﻿<?xml version="1.0" encoding="UTF-8"?>
<bible translation="Kannada KSB 2022 (ಕನ್ನಡ ಸಮಕಾಲಿಕ ಅನುವಾದ)" status="ಪವಿತ್ರ ವೇದ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. ಅನುಮತಿಯೊಂದಿಗೆ ಬಳಸಲಾಗಿದೆ ಪ್ರಪಂಚದಾದ್ಯಂತ ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. Holy Bible, Kannada Contemporary Version™ Copyright © 1999, 2020, 2022 by Biblica, Inc. Used with permission. All rights reserved worldwide." link="https://www.bible.com/bible/3259/EXO.7.KSB">
	<testament name="Old">
		<book number="1">
			<chapter number="1">
				<verse number="1">ಆದಿಯಲ್ಲಿ ದೇವರು ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದರು.</verse>
				<verse number="2">ಭೂಮಿಯು ನಿರಾಕಾರವಾಗಿಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲೆ ಕವಿದಿತ್ತು. ದೇವರಾತ್ಮರು ಜಲ ಸಮೂಹಗಳ ಮೇಲೆ ಚಲಿಸುತ್ತಿದ್ದರು.</verse>
				<verse number="3">ಆಗ ದೇವರು, “ಬೆಳಕಾಗಲಿ” ಎನ್ನಲು, ಬೆಳಕಾಯಿತು.</verse>
				<verse number="4">ದೇವರು ಬೆಳಕನ್ನು ಒಳ್ಳೆಯದೆಂದು ಕಂಡರು. ದೇವರು ಬೆಳಕನ್ನು ಕತ್ತಲೆಯಿಂದ ಪ್ರತ್ಯೇಕಿಸಿದರು.</verse>
				<verse number="5">ದೇವರು ಬೆಳಕಿಗೆ ಹಗಲು ಎಂದೂ ಕತ್ತಲೆಗೆ ರಾತ್ರಿ ಎಂದೂ ಕರೆದರು. ಆಗ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.</verse>
				<verse number="6">ನಂತರ ದೇವರು, “ಜಲರಾಶಿಯ ನಡುವೆ ವಿಸ್ತಾರವಾದ ಗುಮ್ಮಟವಾಗಲಿ, ಅದು ನೀರಿನಿಂದ ಭೂಮಿಯನ್ನು ಪ್ರತ್ಯೇಕ ಮಾಡಲಿ,” ಎಂದರು.</verse>
				<verse number="7">ಹೀಗೆ ದೇವರು ವಿಸ್ತಾರವಾದ ಗುಮ್ಮಟವನ್ನು ಅದರ ಕೆಳಗಿದ್ದ ನೀರನ್ನೂ ಅದರ ಮೇಲಿದ್ದ ನೀರನ್ನೂ ಪ್ರತ್ಯೇಕಿಸಿದರು. ಅದು ಹಾಗೆಯೇ ಆಯಿತು.</verse>
				<verse number="8">ದೇವರು ಆ ಗುಮ್ಮಟಕ್ಕೆ ಆಕಾಶ ಎಂದು ಕರೆದರು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು.</verse>
				<verse number="9">ಆಗ ದೇವರು, “ಆಕಾಶದ ಕೆಳಗಿರುವ ನೀರು ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ, ಒಣ ನೆಲವು ಕಾಣಿಸಲಿ,” ಎಂದರು. ಅದು ಹಾಗೆಯೇ ಆಯಿತು.</verse>
				<verse number="10">ದೇವರು ಒಣ ನೆಲಕ್ಕೆ “ಭೂಮಿ” ಎಂದೂ ಕೂಡಿಕೊಂಡಿದ್ದ ನೀರಿಗೆ “ಸಮುದ್ರ” ಎಂದೂ ಹೆಸರಿಟ್ಟರು. ದೇವರು ಅದನ್ನು ಒಳ್ಳೆಯದೆಂದು ಕಂಡರು.</verse>
				<verse number="11">ಅನಂತರ ದೇವರು, “ಭೂಮಿಯು ಹುಲ್ಲನ್ನೂ ಬೀಜಬಿಡುವ ಗಿಡಗಳನ್ನೂ ಅದರದರ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳನ್ನೂ ಉತ್ಪತ್ತಿ ಮಾಡಲಿ,” ಎಂದು ಹೇಳಿದರು. ಅದು ಹಾಗೆಯೇ ಆಯಿತು.</verse>
				<verse number="12">ಭೂಮಿಯ ಮೇಲೆ ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು ಮತ್ತು ಅದರದರ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳನ್ನು ಮೊಳೆಯಿಸಿದವು. ದೇವರು ಅದನ್ನು ಒಳ್ಳೆಯದೆಂದು ಕಂಡರು.</verse>
				<verse number="13">ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೂರನೆಯ ದಿನವಾಯಿತು.</verse>
				<verse number="14">ಅನಂತರ ದೇವರು, “ಹಗಲನ್ನು ರಾತ್ರಿಯಿಂದ ಪ್ರತ್ಯೇಕಿಸುವುದಕ್ಕೆ ಆಕಾಶಮಂಡಲದಲ್ಲಿ ಬೆಳಕುಗಳಿರಲಿ; ಅವು ಕಾಲಗಳನ್ನೂ ದಿನ ಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.</verse>
				<verse number="15">ಅವು ಭೂಮಿಗೆ ಬೆಳಕನ್ನು ಕೊಡುವುದಕ್ಕೆ ಆಕಾಶಮಂಡಲದಲ್ಲಿ ದೀಪಗಳಂತಿರಲಿ,” ಎಂದರು. ಅದು ಹಾಗೆಯೇ ಆಯಿತು.</verse>
				<verse number="16">ಹಗಲನ್ನಾಳುವುದಕ್ಕೆ ದೊಡ್ಡ ಬೆಳಕನ್ನು, ರಾತ್ರಿಯನ್ನಾಳುವುದಕ್ಕೆ ಚಿಕ್ಕ ಬೆಳಕನ್ನು ಎಂಬಂತೆ ದೇವರು ಎರಡು ದೊಡ್ಡ ಬೆಳಕುಗಳನ್ನು ಉಂಟುಮಾಡಿದರು. ದೇವರು ನಕ್ಷತ್ರಗಳನ್ನು ಸಹ ಉಂಟುಮಾಡಿದರು.</verse>
				<verse number="17">ದೇವರು ಆ ಬೆಳಕುಗಳನ್ನು ಆಕಾಶದಲ್ಲಿಟ್ಟು ಭೂಮಿಗೆ ಬೆಳಕನ್ನು ಕೊಡುವುದಕ್ಕೂ</verse>
				<verse number="18">ಹಗಲನ್ನು ಮತ್ತು ರಾತ್ರಿಯನ್ನು ಆಳುವುದಕ್ಕೂ ಬೆಳಕನ್ನು ಕತ್ತಲೆಯಿಂದ ಪ್ರತ್ಯೇಕಿಸುವುದಕ್ಕೂ ದೇವರು ಅವುಗಳನ್ನು ನೇಮಿಸಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು.</verse>
				<verse number="19">ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ನಾಲ್ಕನೆಯ ದಿನವಾಯಿತು.</verse>
				<verse number="20">ಆಮೇಲೆ ದೇವರು, “ನೀರಿನಲ್ಲಿ ಜೀವಜಂತುಗಳು ತುಂಬಿಕೊಳ್ಳಲಿ, ಭೂಮಿಯ ಮೇಲೆ ಆಕಾಶಮಂಡಲದಲ್ಲಿ ಪಕ್ಷಿಗಳು ಹಾರಾಡಲಿ,” ಎಂದರು.</verse>
				<verse number="21">ಹೀಗೆ ದೇವರು ದೊಡ್ಡ ಜಲಚರಗಳನ್ನು, ನೀರಿನಲ್ಲಿ ತುಂಬಿರುವ ಎಲ್ಲಾ ಚಲಿಸುವ ಜೀವ ಜಂತುಗಳನ್ನು, ರೆಕ್ಕೆಗಳುಳ್ಳ ಪ್ರತಿಯೊಂದು ಪಕ್ಷಿಯನ್ನು ಅವುಗಳ ಜಾತಿಗನುಸಾರವಾಗಿ ಸೃಷ್ಟಿಸಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು.</verse>
				<verse number="22">ದೇವರು ಅವುಗಳನ್ನು ಆಶೀರ್ವದಿಸಿ ಅವುಗಳಿಗೆ, “ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಸಮುದ್ರಗಳಲ್ಲಿ ನೀರನ್ನು ತುಂಬಿರಿ, ಭೂಮಿಯ ಮೇಲೆ ಪಕ್ಷಿಗಳ ಸಂಖ್ಯೆ ಹೆಚ್ಚಾಗಲಿ,” ಎಂದರು.</verse>
				<verse number="23">ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು.</verse>
				<verse number="24">ಆಮೇಲೆ ದೇವರು, “ಭೂಮಿಯಿಂದ ಎಲ್ಲಾ ತರಹದ ಜೀವಿಗಳು ಉಂಟಾಗಲಿ: ಪಶುಗಳು, ನೆಲದ ಮೇಲೆ ಹರಿದಾಡುವ ಜೀವಿಗಳು, ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಉಂಟಾಗಲಿ,” ಎಂದರು. ಅದು ಹಾಗೆಯೇ ಆಯಿತು.</verse>
				<verse number="25">ಹೀಗೆ ದೇವರು ಎಲ್ಲ ತರದ ಕಾಡುಮೃಗಗಳನ್ನೂ ಪಶುಗಳನ್ನೂ ನೆಲದ ಮೇಲೆ ಹರಿದಾಡುವ ಜೀವಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದರು. ದೇವರು ಅದನ್ನು ಒಳ್ಳೆಯದೆಂದು ಕಂಡರು.</verse>
				<verse number="26">ತರುವಾಯ ದೇವರು, “ನಾವು ನಮ್ಮ ಸ್ವರೂಪದಲ್ಲಿ, ನಮ್ಮ ಹೋಲಿಕೆಯಲ್ಲಿ ಮನುಷ್ಯನನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ಮಾಡಲಿ,” ಎಂದರು.</verse>
				<verse number="27">ಹೀಗೆ ದೇವರು ಮನುಷ್ಯನನ್ನು ತಮ್ಮ ಸ್ವರೂಪದಲ್ಲಿ ಸೃಷ್ಟಿ ಮಾಡಿದರು. ದೇವರ ಸ್ವರೂಪದಲ್ಲಿಯೇ ಅವರನ್ನು ಸೃಷ್ಟಿ ಮಾಡಿದರು. ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿ ಮಾಡಿದರು.</verse>
				<verse number="28">ದೇವರು ಅವರನ್ನು ಆಶೀರ್ವದಿಸಿ, “ನೀವು ಸಂತಾನವುಳ್ಳವರಾಗಿ, ಸಂಖ್ಯೆಯಲ್ಲಿ ಹೆಚ್ಚಿರಿ, ಭೂಮಿಯನ್ನು ತುಂಬಿಸಿ ಅದನ್ನು ಆಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ನೆಲದ ಮೇಲೆ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ನಡೆಸಿರಿ,” ಎಂದು ಅವರಿಗೆ ಹೇಳಿದರು.</verse>
				<verse number="29">ದೇವರು, “ಇಗೋ, ಭೂಮಿಯ ಮೇಲಿರುವ ಬೀಜಬಿಡುವ ಸಕಲ ಸಸ್ಯಗಳನ್ನೂ ಬೀಜಬಿಡುವ ಸಕಲ ಹಣ್ಣಿನ ಮರಗಳನ್ನೂ ನಿಮಗೆ ಕೊಟ್ಟಿದ್ದೇನೆ. ಅವು ನಿಮಗೆ ಆಹಾರಕ್ಕಾಗಿರುವುವು.</verse>
				<verse number="30">ಭೂಮಿಯಲ್ಲಿರುವ ಎಲ್ಲಾ ಜೀವಿಗಳಿಗೂ ಆಕಾಶದ ಪಕ್ಷಿಗಳಿಗೂ ನೆಲದ ಮೇಲೆ ಹರಿದಾಡುವ ಜೀವಿಗಳಿಗೂ ಉಸಿರನ್ನು ಹೊಂದಿರುವ ಪ್ರತಿಯೊಂದು ಜೀವಿಗಳಿಗೆ ಹಸಿರಾದ ಸಸ್ಯಗಳನ್ನೆಲ್ಲಾ ನಾನು ಆಹಾರವಾಗಿ ಕೊಟ್ಟಿದ್ದೇನೆ,” ಎಂದರು. ಅದು ಹಾಗೆಯೇ ಆಯಿತು.</verse>
				<verse number="31">ದೇವರು ತಾವು ಉಂಟು ಮಾಡಿದ್ದನ್ನೆಲ್ಲಾ ನೋಡಲು, ಅವೆಲ್ಲವೂ ಬಹಳ ಒಳ್ಳೆಯದಾಗಿದ್ದವು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.</verse>
			</chapter>
			<chapter number="2">
				<verse number="1">ಹೀಗೆ ಭೂಮ್ಯಾಕಾಶಗಳೂ ಅವುಗಳಲ್ಲಿರುವ ಸಮಸ್ತವೂ ಸಂಪೂರ್ಣವಾಗಿ ನಿರ್ಮಿತವಾದವು.</verse>
				<verse number="2">ದೇವರು ತಮ್ಮ ಕಾರ್ಯಗಳನ್ನೆಲ್ಲಾ ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.</verse>
				<verse number="3">ಅನಂತರ ದೇವರು ಏಳನೆಯ ದಿನವನ್ನು ಆಶೀರ್ವದಿಸಿ, ಅದನ್ನು ಪವಿತ್ರ ದಿನವನ್ನಾಗಿ ಮಾಡಿದರು. ಏಕೆಂದರೆ ಆ ದಿನದಲ್ಲಿ ದೇವರು ಸೃಷ್ಟಿಸಿದ ತಮ್ಮ ಎಲ್ಲಾ ಕೆಲಸಗಳಿಂದ ವಿಶ್ರಮಿಸಿಕೊಂಡರು.</verse>
				<verse number="4">ಯೆಹೋವ ದೇವರು ಭೂಮ್ಯಾಕಾಶಗಳನ್ನು ಉಂಟುಮಾಡಿದರು. ಇದೇ ಭೂಮ್ಯಾಕಾಶಗಳ ನಿರ್ಮಾಣ ಚರಿತ್ರೆ.</verse>
				<verse number="5">ಭೂಮಿಯಲ್ಲಿ ಯಾವ ಗಿಡವೂ ಇನ್ನೂ ಬೆಳೆದಿರಲಿಲ್ಲ, ಯಾವ ಪಲ್ಯವೂ ಇನ್ನೂ ಮೊಳೆತಿರಲಿಲ್ಲ. ಏಕೆಂದರೆ ಯೆಹೋವ ದೇವರು ಭೂಮಿಯ ಮೇಲೆ ಮಳೆ ಸುರಿಸಿರಲಿಲ್ಲ. ಆಗ ಭೂಮಿಯನ್ನು ವ್ಯವಸಾಯ ಮಾಡುವುದಕ್ಕೆ ಮನುಷ್ಯನೂ ಇರಲಿಲ್ಲ.</verse>
				<verse number="6">ಆದರೆ ಭೂಮಿಯಿಂದ ಮಂಜು ಏರಿಬಂದು ನೆಲವನ್ನೆಲ್ಲಾ ತೋಯಿಸಿತು.</verse>
				<verse number="7">ಹೀಗಿರಲು ಯೆಹೋವ ದೇವರು ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ, ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು ಆಗ ಅವನು ಜೀವಿಸುವ ವ್ಯಕ್ತಿಯಾದನು.</verse>
				<verse number="8">ಯೆಹೋವ ದೇವರು ಪೂರ್ವದಿಕ್ಕಿಗಿರುವ ಏದೆನ್ ಸೀಮೆಯಲ್ಲಿ ತೋಟವನ್ನು ಮಾಡಿ, ತಾವು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇರಿಸಿದರು.</verse>
				<verse number="9">ಯೆಹೋವ ದೇವರು ನೋಟಕ್ಕೆ ರಮ್ಯವೂ ಊಟಕ್ಕೆ ಒಳ್ಳೆಯವೂ ಆದ ಎಲ್ಲಾ ಮರಗಳನ್ನೂ ಭೂಮಿಯಲ್ಲಿ ಬೆಳೆಯುವಂತೆ ಮಾಡಿದರು. ತೋಟದ ಮಧ್ಯದಲ್ಲಿ ಜೀವದ ಮರವನ್ನೂ ಒಳ್ಳೆಯದರ ಮತ್ತು ಕೆಟ್ಟದ್ದರ ತಿಳುವಳಿಕೆಯ ಮರವನ್ನೂ ಬೆಳೆಯುವಂತೆ ಮಾಡಿದರು.</verse>
				<verse number="10">ಏದೆನ್ ಸೀಮೆಯಿಂದ ಒಂದು ನದಿ ಹರಿದು, ತೋಟವನ್ನು ತೋಯಿಸುತ್ತಿತ್ತು. ಅದು ಅಲ್ಲಿಂದ ಹರಿದು ವಿಭಾಗವಾಗಿ, ನಾಲ್ಕು ಉಪನದಿಗಳಾದವು.</verse>
				<verse number="11">ಮೊದಲನೆಯದರ ಹೆಸರು ಪೀಶೋನ್; ಅದು ಬಂಗಾರವಿರುವ ಹವೀಲ ದೇಶವನ್ನೆಲ್ಲಾ ಸುತ್ತಿ ಹರಿಯುತ್ತಿತ್ತು.</verse>
				<verse number="12">ಆ ದೇಶದ ಬಂಗಾರವು ಉತ್ತಮವಾಗಿತ್ತು. ಅಲ್ಲಿ ಬದೋಲಖ ಧೂಪ ಮತ್ತು ಗೋಮೇಧಿಕ ರತ್ನ ಇದ್ದವು.</verse>
				<verse number="13">ಎರಡನೆಯ ನದಿಯ ಹೆಸರು ಗೀಹೋನ್; ಅದು ಕೂಷ್ ದೇಶವನ್ನೆಲ್ಲಾ ಸುತ್ತಿ ಹರಿಯುತ್ತಿತ್ತು.</verse>
				<verse number="14">ಮೂರನೆಯ ನದಿಯ ಹೆಸರು ಟೈಗ್ರಿಸ್; ಅದು ಅಸ್ಸೀರಿಯಾ ದೇಶದ ಪೂರ್ವಕ್ಕೆ ಹರಿಯುತ್ತಿತ್ತು. ನಾಲ್ಕನೆಯ ನದಿಯು ಯೂಫ್ರೇಟೀಸ್.</verse>
				<verse number="15">ಯೆಹೋವ ದೇವರು ಮನುಷ್ಯನನ್ನು ಕರೆದುಕೊಂಡು ಹೋಗಿ, ಏದೆನ್ ತೋಟದಲ್ಲಿ ಕೆಲಸ ಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಇಟ್ಟರು.</verse>
				<verse number="16">ಇದಲ್ಲದೆ ಯೆಹೋವ ದೇವರು ಮನುಷ್ಯನಿಗೆ, “ನೀನು ತೋಟದ ಎಲ್ಲಾ ಮರಗಳ ಹಣ್ಣುಗಳನ್ನು ನಿನ್ನ ಇಷ್ಟಾನುಸಾರವಾಗಿ ತಿನ್ನಬಹುದು.</verse>
				<verse number="17">ಆದರೆ ಒಳ್ಳೆಯದರ, ಕೆಟ್ಟದ್ದರ ತಿಳುವಳಿಕೆಯ ಮರದ ಹಣ್ಣನ್ನು ನೀನು ತಿನ್ನಬಾರದು. ಏಕೆಂದರೆ, ನೀನು ಅದನ್ನು ತಿಂದ ದಿನವೇ ಸಾಯುವಿ,” ಎಂದು ಹೇಳಿದರು.</verse>
				<verse number="18">ಅನಂತರ ಯೆಹೋವ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಬೀಳುವ ಸಹಕಾರಿಣಿಯನ್ನು ಉಂಟುಮಾಡುವೆನು,” ಎಂದರು.</verse>
				<verse number="19">ಯೆಹೋವ ದೇವರು ಭೂಮಿಯಲ್ಲಿರುವ ಎಲ್ಲಾ ಕಾಡುಮೃಗಗಳನ್ನೂ ಆಕಾಶದ ಎಲ್ಲಾ ಪಕ್ಷಿಗಳನ್ನೂ ಮಣ್ಣಿನಿಂದ ರೂಪಿಸಿದ ಮೇಲೆ, ಅವುಗಳಿಗೆ ಮನುಷ್ಯನು ಏನು ಹೆಸರಿಡುವನೋ ಎಂದು ನೋಡುವುದಕ್ಕೆ, ಅವುಗಳನ್ನು ಅವನ ಬಳಿಗೆ ತಂದರು. ಒಂದೊಂದು ಜೀವಿಗೂ ಮನುಷ್ಯನು ಕರೆದದ್ದೇ ಆ ಜೀವಿಗಳಿಗೆಲ್ಲಾ ಹೆಸರಾಯಿತು.</verse>
				<verse number="20">ಹೀಗೆ ಮನುಷ್ಯನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಹೆಸರಿಟ್ಟನು. ಆದರೆ ಆದಾಮನಿಗೆ ಸರಿಬೀಳುವ ಸಹಕಾರಿಣಿಯು ಕಾಣಿಸಲಿಲ್ಲ.</verse>
				<verse number="21">ಆದಕಾರಣ ಯೆಹೋವ ದೇವರು ಮನುಷ್ಯನಿಗೆ ಗಾಢನಿದ್ರೆ ಬರಮಾಡಿದರು. ಅವನು ನಿದ್ರಿಸುತ್ತಿರುವಾಗ, ಅವರು ಅವನ ಪಕ್ಕೆಯನ್ನು ತೆಗೆದುಕೊಂಡು, ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು.</verse>
				<verse number="22">ಬಳಿಕ ಯೆಹೋವ ದೇವರು ಮನುಷ್ಯನಿಂದ ತೆಗೆದಿದ್ದ ಪಕ್ಕೆಯಿಂದ ಒಬ್ಬ ಸ್ತ್ರೀಯನ್ನು ಉಂಟುಮಾಡಿ, ಆಕೆಯನ್ನು ಆ ಮನುಷ್ಯನ ಬಳಿಗೆ ತಂದರು.</verse>
				<verse number="23">ಆಗ ಮನುಷ್ಯನು ಹೀಗೆ ಹೇಳಿದನು: “ಇದು ನನ್ನ ಎಲುಬಿನಿಂದಾದ ಎಲುಬು ಮತ್ತು ನನ್ನ ಮಾಂಸದಿಂದಾದ ಮಾಂಸವಾಗಿದೆ. ಈಕೆ ನರನಿಂದ ತೆಗೆದಿರುವುದರಿಂದ, ಈಕೆ, ‘ನಾರಿ’ ಎಂದು ಎನಿಸಿಕೊಳ್ಳುವಳು.”</verse>
				<verse number="24">ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗಿರುವರು.</verse>
				<verse number="25">ಆದಾಮನೂ ಅವನ ಹೆಂಡತಿಯೂ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.</verse>
			</chapter>
			<chapter number="3">
				<verse number="1">ಯೆಹೋವ ದೇವರು ಸೃಷ್ಟಿಸಿದ ಅಡವಿಯ ಎಲ್ಲಾ ಕಾಡುಮೃಗಗಳಿಗಿಂತ ಸರ್ಪವು ಬಹು ಯುಕ್ತಿಯುಳ್ಳದ್ದಾಗಿತ್ತು. ಅದು ಸ್ತ್ರೀಗೆ, “ನೀವು ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಬಾರದೆಂದು ದೇವರು ಹೇಳಿದ್ದು ನಿಜವೋ?” ಎಂದು ಕೇಳಿತು.</verse>
				<verse number="2">ಆಗ ಸ್ತ್ರೀಯು ಸರ್ಪಕ್ಕೆ, “ತೋಟದ ಮರಗಳ ಹಣ್ಣುಗಳನ್ನು ನಾವು ತಿನ್ನಬಹುದು.</verse>
				<verse number="3">ಆದರೆ ತೋಟದ ಮಧ್ಯದಲ್ಲಿರುವ ಈ ಮರದ ಹಣ್ಣಿನ ವಿಷಯವಾಗಿ, ‘ನೀವು ಇದನ್ನು ತಿನ್ನಲೂ ಕೂಡದು, ಮುಟ್ಟಲೂ ಕೂಡದು; ತಿಂದರೆ ಸತ್ತು ಹೋಗುವಿರಿ’ ಎಂದು ದೇವರು ಹೇಳಿದ್ದಾರೆ,” ಎಂದಳು.</verse>
				<verse number="4">ಸರ್ಪವು ಸ್ತ್ರೀಗೆ, “ನೀವು ನಿಶ್ಚಯವಾಗಿ ಸಾಯುವುದಿಲ್ಲ.</verse>
				<verse number="5">ನೀವು ಇದನ್ನು ತಿಂದ ದಿನದಲ್ಲಿ ನಿಮ್ಮ ಕಣ್ಣುಗಳು ತೆರೆಯುವುವು, ನೀವು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ಅರಿತವರಾಗಿ ದೇವರ ಹಾಗೆ ಇರುವಿರಿ. ಇದು ದೇವರಿಗೆ ತಿಳಿದಿದೆ,” ಎಂದು ಹೇಳಿತು.</verse>
				<verse number="6">ಆಗ ಸ್ತ್ರೀಯು, ಆ ಮರದ ಹಣ್ಣು ಆಹಾರಕ್ಕೆ ಒಳ್ಳೆಯದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು, ಆ ಹಣ್ಣನ್ನು ತೆಗೆದುಕೊಂಡು ತಿಂದಳು. ತನ್ನ ಸಂಗಡ ಇದ್ದ ಗಂಡನಿಗೂ ಕೊಟ್ಟಳು, ಅವನೂ ತಿಂದನು.</verse>
				<verse number="7">ಆಗ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆಯಾಗಿದ್ದೇವೆಂದು ತಿಳಿದು, ಅವರು ಅಂಜೂರದ ಎಲೆಗಳನ್ನು ತೆಗೆದುಕೊಂಡು ತಮಗೆ ತಾವೇ ಉಡುಪುಗಳನ್ನು ಮಾಡಿಕೊಂಡರು.</verse>
				<verse number="8">ತರುವಾಯ ಯೆಹೋವ ದೇವರು, ಸಂಜೆಯ ತಂಗಾಳಿಯಲ್ಲಿ ತೋಟದೊಳಗೆ ಸಂಚರಿಸುತ್ತಿರುವಾಗ, ಆ ಸ್ತ್ರೀ ಪುರುಷರು ಅವರ ಸಪ್ಪಳವನ್ನು ಕೇಳಿ, ಅವರಿಗೆ ಕಾಣಿಸಿಕೊಳ್ಳಬಾರದೆಂದು ತೋಟದ ಮರಗಳ ಮಧ್ಯದಲ್ಲಿ ಅಡಗಿಕೊಂಡರು.</verse>
				<verse number="9">ಆಗ ಯೆಹೋವ ದೇವರು ಮನುಷ್ಯನನ್ನು ಕರೆದು ಅವನಿಗೆ, “ನೀನು ಎಲ್ಲಿದ್ದೀ?” ಎಂದರು.</verse>
				<verse number="10">ಅದಕ್ಕೆ ಅವನು, “ನಿನ್ನ ಶಬ್ದವನ್ನು ನಾನು ತೋಟದಲ್ಲಿ ಕೇಳಿದೆ. ನಾನು ಬೆತ್ತಲೆಯಾಗಿರುವುದರಿಂದ ಭಯಪಟ್ಟು ಅಡಗಿಕೊಂಡೆನು,” ಎಂದನು.</verse>
				<verse number="11">ಅದಕ್ಕೆ ದೇವರು, “ನೀನು ಬೆತ್ತಲೆಯಾಗಿದ್ದೀ ಎಂದು ನಿನಗೆ ತಿಳಿಸಿದವರು ಯಾರು? ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಹಣ್ಣನ್ನು ತಿಂದಿದ್ದೀಯೋ?” ಎಂದು ಕೇಳಿದರು.</verse>
				<verse number="12">ಅದಕ್ಕೆ ಮನುಷ್ಯನು, “ನೀನು ನನ್ನ ಸಂಗಡ ಇರಿಸಿದ ಸ್ತ್ರೀಯು ಆ ಮರದ ಹಣ್ಣನ್ನು ನನಗೆ ಕೊಟ್ಟಳು. ನಾನು ತಿಂದೆನು,” ಎಂದು ಹೇಳಿದನು.</verse>
				<verse number="13">ಯೆಹೋವ ದೇವರು ಸ್ತ್ರೀಗೆ, “ಇದೇನು ನೀನು ಮಾಡಿದ್ದು?” ಎಂದು ಕೇಳಲು, ಅದಕ್ಕೆ ಸ್ತ್ರೀಯು, “ಸರ್ಪವು ನನ್ನನ್ನು ವಂಚಿಸಿತು. ನಾನು ತಿಂದೆನು,” ಎಂದು ಉತ್ತರಕೊಟ್ಟಳು.</verse>
				<verse number="14">ಆಗ ಯೆಹೋವ ದೇವರು ಸರ್ಪಕ್ಕೆ ಹೀಗೆ ಹೇಳಿದರು, “ನೀನು ಇದನ್ನು ಮಾಡಿದ ಕಾರಣ, “ಎಲ್ಲಾ ಪಶುಗಳಲ್ಲಿಯೂ ಎಲ್ಲಾ ಕಾಡುಮೃಗಗಳಲ್ಲಿಯೂ ನೀನು ಬಹು ಶಾಪಗ್ರಸ್ತನಾದೆ. ಇಂದಿನಿಂದ ನಿನ್ನ ಜೀವನ ಪೂರ್ತಿ ಹೊಟ್ಟೆಯಿಂದ ಹರಿದಾಡಿ, ಮಣ್ಣನ್ನು ತಿನ್ನುವೆ.</verse>
				<verse number="15">ನಾನು ನಿನಗೂ ಸ್ತ್ರೀಗೂ ನಿಮ್ಮ ಸಂತಾನಕ್ಕೂ ಆಕೆಯ ಸಂತಾನಕ್ಕೂ ವೈರತ್ವವನ್ನು ಇಡುವೆನು. ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು ಕಚ್ಚುವಿ.”</verse>
				<verse number="16">ಬಳಿಕ ದೇವರು ಸ್ತ್ರೀಗೆ ಹೀಗೆ ಹೇಳಿದರು, “ನಾನು ನಿನ್ನ ಗರ್ಭ ವೇದನೆಯನ್ನು ಅಧಿಕವಾಗಿ ಹೆಚ್ಚಿಸುವೆನು. ನೀನು ನೋವಿನಿಂದ ಮಕ್ಕಳನ್ನು ಹೆರುವಿ. ನಿನ್ನ ಗಂಡನ ಮೇಲೆ ನಿನ್ನ ಬಯಕೆ ಇರುವುದು. ಅವನು ನಿನ್ನನ್ನು ಆಳುವನು.”</verse>
				<verse number="17">ಅನಂತರ ದೇವರು ಆದಾಮನಿಗೆ ಹೀಗೆ ಹೇಳಿದರು, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, “ನಿನ್ನ ನಿಮಿತ್ತ ಭೂಮಿಗೆ ಶಾಪ ಬಂತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ದುಡಿದು, ಅದರ ಹುಟ್ಟುವಳಿಯನ್ನು ಉಣ್ಣುವೆ.</verse>
				<verse number="18">ಭೂಮಿಯಲ್ಲಿ ಮುಳ್ಳುಗಿಡಗಳೂ ಕಳ್ಳಿಗಳೂ ಬೆಳೆಯುವುವು. ನೀನು ಹೊಲದ ಬೆಳೆಯನ್ನು ಉಣ್ಣುವೆ.</verse>
				<verse number="19">ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”</verse>
				<verse number="20">ಆದಾಮನು ತನ್ನ ಹೆಂಡತಿಯ ಹೆಸರನ್ನು ಹವ್ವ ಎಂದು ಕರೆದನು. ಏಕೆಂದರೆ ಆಕೆಯೇ ಬದುಕಿದವರಿಗೆಲ್ಲಾ ತಾಯಿಯಾಗಿದ್ದಾಳೆ.</verse>
				<verse number="21">ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದರು.</verse>
				<verse number="22">ಯೆಹೋವ ದೇವರು, “ಇಗೋ, ಮನುಷ್ಯನು ಒಳ್ಳೆಯದನ್ನು ಮತ್ತು ಕೆಟ್ಟದ್ದನ್ನು ತಿಳಿದು, ನಮ್ಮಲ್ಲಿ ಒಬ್ಬನಂತಾದನಲ್ಲಾ. ಈಗ ಅವನು ಕೈಚಾಚಿ, ಜೀವವೃಕ್ಷದ ಹಣ್ಣನ್ನು ಸಹ ತಿಂದು, ಶಾಶ್ವತವಾಗಿ ಬದುಕುವವನಾಗಬಾರದು,” ಎಂದರು.</verse>
				<verse number="23">ಆದ್ದರಿಂದ ಅವನು ಉತ್ಪತ್ತಿಯಾದ ಭೂಮಿಯನ್ನೇ ವ್ಯವಸಾಯ ಮಾಡುವುದಕ್ಕೆ ಯೆಹೋವ ದೇವರು ಏದೆನ್ ತೋಟದೊಳಗಿಂದ ಅವನನ್ನು ಹೊರಗೆ ಕಳುಹಿಸಿಬಿಟ್ಟರು.</verse>
				<verse number="24">ಹೀಗೆ ಅವರು ಮನುಷ್ಯನನ್ನು ಹೊರಗೆ ಹಾಕಿ, ಜೀವವೃಕ್ಷದ ದಾರಿಯನ್ನು ಕಾಯುವುದಕ್ಕೆ ಏದೆನ್ ತೋಟದ ಪೂರ್ವದಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಖಡ್ಗವನ್ನೂ ಇರಿಸಿದರು.</verse>
			</chapter>
			<chapter number="4">
				<verse number="1">ಆದಾಮನು ತನ್ನ ಹೆಂಡತಿಯಾದ ಹವ್ವಳನ್ನು ಕೂಡಲು, ಆಕೆಯು ಗರ್ಭಿಣಿಯಾಗಿ, ಕಾಯಿನನನ್ನು ಹೆತ್ತು, “ನಾನು ಯೆಹೋವ ದೇವರ ಅನುಗ್ರಹದಿಂದ ಗಂಡು ಮಗುವನ್ನು ಪಡೆದಿದ್ದೇನೆ,” ಎಂದು ಹೇಳಿದಳು.</verse>
				<verse number="2">ಅನಂತರ ಆಕೆಯು ಅವನ ತಮ್ಮನಾದ ಹೇಬೆಲನನ್ನು ಹೆತ್ತಳು. ಹೇಬೆಲನು ಕುರಿ ಕಾಯುವವನಾದನು ಮತ್ತು ಕಾಯಿನನು ವ್ಯವಸಾಯ ಮಾಡುವವನಾದನು.</verse>
				<verse number="3">ಸ್ವಲ್ಪ ಕಾಲದ ತರುವಾಯ, ಕಾಯಿನನು ಹೊಲದ ಬೆಳೆಯಲ್ಲಿ ಕೆಲವನ್ನು ತಂದು, ಯೆಹೋವ ದೇವರಿಗೆ ಕಾಣಿಕೆಯಾಗಿ ಸಮರ್ಪಿಸಿದನು.</verse>
				<verse number="4">ಹೇಬೆಲನು ಸಹ ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನೂ ಅವುಗಳ ಕೊಬ್ಬನ್ನೂ ತಂದನು. ಯೆಹೋವ ದೇವರು ಹೇಬೆಲನನ್ನೂ ಅವನ ಕಾಣಿಕೆಯನ್ನೂ ಮೆಚ್ಚಿಕೊಂಡರು.</verse>
				<verse number="5">ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ದೇವರು ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು. ಅವನ ಮುಖವು ಬಾಡಿತು.</verse>
				<verse number="6">ಆಗ ಯೆಹೋವ ದೇವರು ಕಾಯಿನನಿಗೆ, “ನೀನು ಕೋಪಗೊಂಡಿದ್ದೇಕೆ? ಏಕೆ ನಿನ್ನ ಮುಖವು ಬಾಡಿದೆ?</verse>
				<verse number="7">ನೀನು ಒಳ್ಳೆಯದನ್ನು ಮಾಡಿದರೆ, ನೀನು ಸ್ವೀಕಾರವಾಗುತ್ತಿದ್ದೆ ಅಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ, ಬಾಗಿಲಲ್ಲಿ ಪಾಪವು ಹೊಂಚಿಕೊಂಡಿರುವುದು ಮತ್ತು ಅದು ನಿನ್ನನ್ನು ನುಂಗಲು ಬಯಸುತ್ತದೆ. ಆದರೂ ನೀನು ಅದರ ಮೇಲೆ ಅಧಿಕಾರ ಮಾಡಬೇಕು,” ಎಂದು ಹೇಳಿದರು.</verse>
				<verse number="8">ಅನಂತರ ಕಾಯಿನನು, “ಅಡವಿಗೆ ಹೋಗೋಣ ಬಾ,” ಎಂದು ತನ್ನ ತಮ್ಮನಿಗೆ ಹೇಳಿದನು. ಅವರು ಅಲ್ಲಿ ಬಂದಾಗ ಕಾಯಿನನು ತನ್ನ ತಮ್ಮ ಹೇಬೆಲನ ಮೇಲೆ ದಾಳಿಮಾಡಿ, ಅವನನ್ನು ಕೊಂದುಹಾಕಿದನು.</verse>
				<verse number="9">ಯೆಹೋವ ದೇವರು ಕಾಯಿನನನ್ನು, “ನಿನ್ನ ತಮ್ಮ ಹೇಬೆಲನು ಎಲ್ಲಿ?” ಎಂದು ಕೇಳಲು, ಅವನು, “ನಾನರಿಯೆ. ನಾನು ನನ್ನ ತಮ್ಮನನ್ನು ಕಾಯುವವನೋ?” ಎಂದು ಉತ್ತರಕೊಟ್ಟನು.</verse>
				<verse number="10">ಅದಕ್ಕೆ ಯೆಹೋವ ದೇವರು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯಿಂದ ನನ್ನನ್ನು ಕೂಗುತ್ತಿದೆ.</verse>
				<verse number="11">ನೀನು ಈಗ ಶಾಪಗ್ರಸ್ತನಾಗಿದ್ದಿ. ನೀನು ಸುರಿಸಿದ ನಿನ್ನ ತಮ್ಮನ ರಕ್ತವನ್ನು ಸ್ವೀಕರಿಸಲು ಬಾಯಿತೆರೆದಿರುವ ಭೂಮಿಯಿಂದ ತಿರಸ್ಕಾರವಾಗಿದ್ದಿ.</verse>
				<verse number="12">ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ ಅದು ಇನ್ನು ಮುಂದೆ ಫಲಿಸುವುದಿಲ್ಲ. ನೀನು ಭೂಲೋಕದಲ್ಲಿ ಅಲೆಮಾರಿಯಾಗಿ ತಿರುಗುವವನು ಆಗಿರುವೆ,” ಎಂದರು.</verse>
				<verse number="13">ಆಗ ಕಾಯಿನನು ಯೆಹೋವ ದೇವರಿಗೆ, “ನನ್ನ ಶಿಕ್ಷೆಯು ತಾಳಲಾರದಷ್ಟು ದೊಡ್ಡದಾಗಿದೆ.</verse>
				<verse number="14">ಇಗೋ, ನೀವು ಈ ದಿನ ನನ್ನನ್ನು ಸ್ವದೇಶದಿಂದ ಓಡಿಸುತ್ತಿದ್ದೀರಲ್ಲಾ! ನಿಮ್ಮ ಸಮ್ಮುಖದಿಂದ ನಾನು ಮರೆಯಾಗಿರಬೇಕಾಯಿತು. ಭೂಮಿಯಲ್ಲಿ ಅಲೆಮಾರಿಯಾಗಿರಬೇಕು. ಇದಲ್ಲದೆ ನನ್ನನ್ನು ಕಂಡವರು ಕೊಲ್ಲುವರು,” ಎಂದನು.</verse>
				<verse number="15">ಆದ್ದರಿಂದ ಯೆಹೋವ ದೇವರು ಅವನಿಗೆ, “ಹಾಗಲ್ಲ, ಕಾಯಿನನನ್ನು ಕೊಲ್ಲುವವನ ಮೇಲೆ ಏಳರಷ್ಟು ಪ್ರತೀಕಾರವಿರುವುದು,” ಎಂದು ಹೇಳಿದರು. ಕಾಯಿನನನ್ನು ಕಂಡವರು ಕೊಲ್ಲದ ಹಾಗೆ ಯೆಹೋವ ದೇವರು ಅವನ ಮೇಲೆ ಒಂದು ಗುರುತನ್ನು ಇಟ್ಟರು.</verse>
				<verse number="16">ಆಗ ಕಾಯಿನನು ಯೆಹೋವ ದೇವರ ಸನ್ನಿಧಿಯಿಂದ ಹೊರಟುಹೋಗಿ, ಏದೆನ್ ಸೀಮೆಗೆ ಪೂರ್ವದಲ್ಲಿದ್ದ ನೋದು ಎಂಬ ದೇಶದಲ್ಲಿ ವಾಸಿಸಿದನು.</verse>
				<verse number="17">ಕಾಯಿನನು ತನ್ನ ಹೆಂಡತಿಯನ್ನು ಕೂಡಲು, ಅವಳು ಗರ್ಭಿಣಿಯಾಗಿ ಹನೋಕನನ್ನು ಪಡೆದಳು. ಇದಲ್ಲದೆ ಕಾಯಿನನು ಒಂದು ಊರನ್ನು ಕಟ್ಟಿ, ಅದಕ್ಕೆ ಹನೋಕ್ ಎಂದು ತನ್ನ ಮಗನ ಹೆಸರನ್ನಿಟ್ಟನು.</verse>
				<verse number="18">ಹನೋಕನಿಂದ ಈರಾದನು ಹುಟ್ಟಿದನು. ಈರಾದನಿಂದ ಮೆಹೂಯಾಯೇಲನು ಹುಟ್ಟಿದನು. ಮೆಹೂಯಾಯೇಲನಿಂದ ಮೆತೂಷಾಯೇಲನು ಹುಟ್ಟಿದನು. ಮೆತೂಷಾಯೇಲನಿಂದ ಲೆಮೆಕನು ಹುಟ್ಟಿದನು.</verse>
				<verse number="19">ಲೆಮೆಕನು ಇಬ್ಬರು ಸ್ತ್ರೀಯರನ್ನು ಮದುವೆಯಾದನು. ಒಬ್ಬಳ ಹೆಸರು ಆದಾ ಮತ್ತೊಬ್ಬಳ ಹೆಸರು ಚಿಲ್ಲಾ.</verse>
				<verse number="20">ಆದಾಳು ಯಾಬಾಲನನ್ನು ಹೆತ್ತಳು. ಪಶುಗಳನ್ನು ಸಾಕುತ್ತಾ, ಗುಡಾರಗಳಲ್ಲಿ ವಾಸಿಸುವವರೆಲ್ಲರ ಮೂಲಪುರುಷನು ಇವನೇ.</verse>
				<verse number="21">ಇವನ ತಮ್ಮನ ಹೆಸರು ಯೂಬಾಲನು. ಇವನು ಕಿನ್ನರಿ ಕೊಳಲುಗಳನ್ನು ನುಡಿಸುವವರ ಮೂಲಪುರುಷನು.</verse>
				<verse number="22">ಚಿಲ್ಲಾ ತೂಬಲ್ ಕಾಯಿನನನ್ನು ಪಡೆದಳು. ಅವನು ಕಂಚು ಮತ್ತು ಕಬ್ಬಿಣದ ಆಯುಧಗಳನ್ನು ಮಾಡುವವನಾಗಿದ್ದನು. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.</verse>
				<verse number="23">ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: “ಆದಾ, ಚಿಲ್ಲಾ, ನನ್ನ ಮಾತನ್ನು ಕೇಳಿರಿ. ಲೆಮೆಕನ ಹೆಂಡತಿಯರೇ, ನಾನು ಹೇಳುವುದನ್ನು ಗಮನಿಸಿರಿ. ನನಗೆ ಗಾಯಮಾಡಿದ ಒಬ್ಬ ಮನುಷ್ಯನನ್ನು ಕೊಂದೆನು. ನನ್ನನ್ನು ಹೊಡೆದ ಯುವಕನನ್ನು ಹತ ಮಾಡಿದೆನು.</verse>
				<verse number="24">ಕಾಯಿನನನ್ನು ಕೊಂದವನಿಗೆ ಏಳರಷ್ಟು ಪ್ರತೀಕಾರವಾದರೆ, ಲೆಮೆಕನನ್ನು ಹೊಡೆಯುವವನಿಗೆ, ಎಪ್ಪತ್ತೇಳರಷ್ಟಾಗುವುದು.”</verse>
				<verse number="25">ಆದಾಮನು ತಿರುಗಿ ತನ್ನ ಹೆಂಡತಿಯನ್ನು ಕೂಡಲು, ಆಕೆ ಗಂಡು ಮಗುವನ್ನು ಹೆತ್ತು, “ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ, ದೇವರು ನನಗೆ ಬೇರೆ ಸಂತಾನವನ್ನು ನೇಮಿಸಿದನು,” ಎಂದು ಆ ಮಗುವಿಗೆ, ಸೇತ್ ಎಂದು ಹೆಸರಿಟ್ಟಳು.</verse>
				<verse number="26">ಸೇತನಿಗೆ ಒಬ್ಬ ಮಗನು ಹುಟ್ಟಿದನು. ಅವನಿಗೆ ಎನೋಷ್ ಎಂದು ಹೆಸರಿಟ್ಟನು. ಆ ಕಾಲದಲ್ಲಿ ಜನರು, ಯೆಹೋವ ಎಂಬ ಹೆಸರನ್ನು ಆರಾಧಿಸುವುದಕ್ಕೆ ಪ್ರಾರಂಭಿಸಿದರು.</verse>
			</chapter>
			<chapter number="5">
				<verse number="1">ಆದಾಮನ ವಂಶದವರ ದಾಖಲೆಯಿದು: ದೇವರು ಮನುಷ್ಯನನ್ನು ಸೃಷ್ಟಿಸಿದ ದಿನದಲ್ಲಿ ಅವನನ್ನು ತಮ್ಮನ್ನೇ ಹೋಲುವಂತೆ ಉಂಟುಮಾಡಿದರು.</verse>
				<verse number="2">ದೇವರು ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿ ಮಾಡಿದರು. ಅದೇ ದಿನದಲ್ಲಿ ಅವರನ್ನು ಆಶೀರ್ವದಿಸಿ, ಅವರಿಗೆ “ಮನುಷ್ಯ” ಎಂದು ಕರೆದರು.</verse>
				<verse number="3">ಆದಾಮನು ನೂರಮೂವತ್ತು ವರುಷದವನಾದಾಗ ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ, “ಸೇತ್” ಎಂದು ಹೆಸರಿಟ್ಟನು.</verse>
				<verse number="4">ಸೇತನು ಹುಟ್ಟಿದ ಮೇಲೆ ಆದಾಮನು ಗಂಡು ಹೆಣ್ಣು ಮಕ್ಕಳನ್ನು ಪಡೆದು, ಎಂಟುನೂರು ವರುಷ ಬದುಕಿದನು.</verse>
				<verse number="5">ಆದಾಮನು ಒಟ್ಟು ಒಂಬೈನೂರ ಮೂವತ್ತು ವರುಷ ಬದುಕಿ ಸತ್ತನು.</verse>
				<verse number="6">ಸೇತನು ನೂರ ಐದು ವರುಷದವನಾದಾಗ ಎನೋಷನನ್ನು ಪಡೆದನು.</verse>
				<verse number="7">ಎನೋಷನು ಹುಟ್ಟಿದ ಮೇಲೆ ಸೇತನು ಎಂಟುನೂರ ಏಳು ವರುಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳು ಇದ್ದರು.</verse>
				<verse number="8">ಸೇತನು ಒಟ್ಟು ಒಂಬೈನೂರ ಹನ್ನೆರಡು ವರ್ಷ ಬದುಕಿ ಸತ್ತನು.</verse>
				<verse number="9">ಎನೋಷನು ತೊಂಬತ್ತು ವರ್ಷದವನಾದಾಗ ಕೇನಾನನನ್ನು ಪಡೆದನು.</verse>
				<verse number="10">ಕೇನಾನನು ಹುಟ್ಟಿದ ಮೇಲೆ ಎನೋಷನು ಗಂಡು ಹೆಣ್ಣು ಮಕ್ಕಳನ್ನು ಪಡೆದು ಎಂಟುನೂರ ಹದಿನೈದು ವರುಷ ಬದುಕಿದನು.</verse>
				<verse number="11">ಅವನು ಒಟ್ಟು ಒಂಬೈನೂರ ಐದು ವರುಷ ಬದುಕಿ ಸತ್ತನು.</verse>
				<verse number="12">ಕೇನಾನನು ಎಪ್ಪತ್ತು ವರುಷದವನಾದಾಗ, ಅವನಿಂದ ಮಹಲಲೇಲನು ಹುಟ್ಟಿದನು.</verse>
				<verse number="13">ಕೇನಾನನು ಮಹಲಲೇಲನು ಹುಟ್ಟಿದ ಮೇಲೆ ಎಂಟುನೂರ ನಲವತ್ತು ವರ್ಷ ಬದುಕಿ, ಗಂಡು ಹೆಣ್ಣು ಮಕ್ಕಳನ್ನು ಪಡೆದನು.</verse>
				<verse number="14">ಕೇನಾನನು ಒಟ್ಟು ಒಂಬೈನೂರ ಹತ್ತು ವರ್ಷ ಬದುಕಿ ಸತ್ತನು.</verse>
				<verse number="15">ಮಹಲಲೇಲನು ಅರವತ್ತೈದು ವರ್ಷದವನಾಗಿದ್ದಾಗ, ಅವನಿಂದ ಯೆರೆದನು ಹುಟ್ಟಿದನು.</verse>
				<verse number="16">ಯೆರೆದನು ಹುಟ್ಟಿದ ಮೇಲೆ ಮಹಲಲೇಲನು ಎಂಟುನೂರ ಮೂವತ್ತು ವರ್ಷ ಬದುಕಿ ಗಂಡು, ಹೆಣ್ಣು ಮಕ್ಕಳನ್ನು ಪಡೆದನು.</verse>
				<verse number="17">ಮಹಲಲೇಲನು ಎಂಟುನೂರ ತೊಂಬತ್ತೈದು ವರ್ಷ ಬದುಕಿ ತರುವಾಯ ಸತ್ತನು.</verse>
				<verse number="18">ಯೆರೆದನು ನೂರ ಅರವತ್ತೆರಡು ವರುಷದವನಾಗಿದ್ದಾಗ, ಅವನಿಂದ ಹನೋಕನು ಹುಟ್ಟಿದನು.</verse>
				<verse number="19">ಹನೋಕನು ಹುಟ್ಟಿದ ಮೇಲೆ, ಯೆರೆದನು ಎಂಟುನೂರು ವರ್ಷ ಬದುಕಿದನು. ಅವನಿಂದ ಗಂಡು, ಹೆಣ್ಣುಮಕ್ಕಳು ಹುಟ್ಟಿದರು.</verse>
				<verse number="20">ಯೆರೆದನು ಒಟ್ಟು ಒಂಬೈನೂರ ಅರವತ್ತೆರಡು ವರ್ಷ ಬದುಕಿ, ತರುವಾಯ ಸತ್ತನು.</verse>
				<verse number="21">ಹನೋಕನು ಅರವತ್ತೈದು ವರ್ಷದವನಾಗಿದ್ದಾಗ, ಅವನಿಂದ ಮೆತೂಷೆಲಹನು ಹುಟ್ಟಿದನು.</verse>
				<verse number="22">ಮೆತೂಷೆಲಹನು ಹುಟ್ಟಿದ ತರುವಾಯ, ಹನೋಕನು ಮುನ್ನೂರು ವರ್ಷ ದೇವರೊಂದಿಗೆ ನಡೆದನು. ಅವನಿಂದ ಗಂಡು, ಹೆಣ್ಣುಮಕ್ಕಳು ಹುಟ್ಟಿದರು.</verse>
				<verse number="23">ಹನೋಕನು ಒಟ್ಟು ಮುನ್ನೂರ ಅರವತ್ತೈದು ವರ್ಷ ಬದುಕಿದನು.</verse>
				<verse number="24">ದೇವರೊಂದಿಗೆ ನಂಬಿಗಸ್ತನಾಗಿ ನಡೆಯುತ್ತಿದ್ದ ಹನೋಕನನ್ನು ದೇವರು ತೆಗೆದುಕೊಂಡು ಹೋದದ್ದರಿಂದ ಅವನು ಕಾಣಲಿಲ್ಲ.</verse>
				<verse number="25">ಮೆತೂಷೆಲಹನು ನೂರ ಎಂಬತ್ತೇಳು ವರ್ಷದವನಾಗಿದ್ದಾಗ, ಅವನಿಂದ ಲೆಮೆಕನು ಹುಟ್ಟಿದನು.</verse>
				<verse number="26">ಲೆಮೆಕನು ಹುಟ್ಟಿದ ಮೇಲೆ, ಮೆತೂಷೆಲಹನು ಏಳುನೂರ ಎಂಬತ್ತೆರಡು ವರ್ಷ ಬದುಕಿದನು. ಅವನಿಂದ ಗಂಡು, ಹೆಣ್ಣುಮಕ್ಕಳು ಹುಟ್ಟಿದರು.</verse>
				<verse number="27">ಮೆತೂಷೆಲಹನಿಗೆ ಒಟ್ಟು ಒಂಬೈನೂರ ಅರವತ್ತೊಂಭತ್ತು ವರ್ಷಗಳಾಗಿದ್ದವು. ತರುವಾಯ ಅವನು ಸತ್ತನು.</verse>
				<verse number="28">ಲೆಮೆಕನು ನೂರ ಎಂಬತ್ತೆರಡು ವರ್ಷದವನಾದಾಗ, ಒಬ್ಬ ಮಗನನ್ನು ಪಡೆದನು.</verse>
				<verse number="29">ಅವನಿಗೆ, ನೋಹ ಎಂದು ಹೆಸರಿಟ್ಟು, “ಯೆಹೋವ ದೇವರು ಶಪಿಸಿದ ಭೂಮಿಯಿಂದ ನಮಗೆ ಉಂಟಾದ ಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಉಪಶಮನಗೊಳಿಸುವನು,” ಎಂದು ಹೇಳಿದನು.</verse>
				<verse number="30">ನೋಹನು ಹುಟ್ಟಿದ ಮೇಲೆ, ಲೆಮೆಕನು ಗಂಡು, ಹೆಣ್ಣು ಮಕ್ಕಳನ್ನು ಪಡೆದು, ಐನೂರ ತೊಂಬತ್ತೈದು ವರ್ಷ ಬದುಕಿದನು.</verse>
				<verse number="31">ಲೆಮೆಕನು ಒಟ್ಟು ಏಳುನೂರ ಎಪ್ಪತ್ತೇಳು ವರ್ಷ ಬದುಕಿದನು. ತರುವಾಯ ಅವನು ಸತ್ತನು.</verse>
				<verse number="32">ನೋಹನು ಐನೂರು ವರ್ಷದವನಾಗಿದ್ದನು. ಆಗ ನೋಹನಿಂದ ಶೇಮ್, ಹಾಮ್, ಯೆಫೆತರು ಹುಟ್ಟಿದರು.</verse>
			</chapter>
			<chapter number="6">
				<verse number="1">ಭೂಮಿಯ ಮೇಲೆ ಜನರ ಸಂಖ್ಯೆ ಹೆಚ್ಚಾಗತೊಡಗಿದಾಗ ಅವರಿಗೆ ಪುತ್ರಿಯರು ಹುಟ್ಟಿದರು.</verse>
				<verse number="2">ಆಗ ದೇವಪುತ್ರರು, ಮನುಷ್ಯ ಪುತ್ರಿಯರ ಸೌಂದರ್ಯವನ್ನು ಕಂಡು ಅವರನ್ನು ಆರಿಸಿಕೊಂಡು, ತಮಗೆ ಹೆಂಡತಿಯರನ್ನಾಗಿ ಮಾಡಿಕೊಂಡರು.</verse>
				<verse number="3">ಆಗ ಯೆಹೋವ ದೇವರು, “ನನ್ನ ಆತ್ಮವು ಮನುಷ್ಯರಲ್ಲಿ ನಿತ್ಯವಾಗಿ ಇರುವುದಿಲ್ಲ. ಏಕೆಂದರೆ ಅವರು ಮರ್ತ್ಯರೇ. ಆದರೂ ಅವರ ಆಯುಷ್ಯವು ನೂರ ಇಪ್ಪತ್ತು ವರ್ಷಗಳಾಗಿರುವುದು,” ಎಂದರು.</verse>
				<verse number="4">ಆ ದಿನಗಳಲ್ಲಿ ಭೂಮಿಯ ಮೇಲೆ ನೆಫೀಲಿಯೆಂಬ ರಾಕ್ಷಸ ವಂಶದವರು ಇದ್ದರು. ನಂತರದಲ್ಲಿಯೂ ಇದ್ದರು. ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಕೂಡಿದಾಗ, ಮಕ್ಕಳು ಹುಟ್ಟಿದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಿಗಳು.</verse>
				<verse number="5">ಮನುಷ್ಯನ ದುಷ್ಟತನವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳೆಲ್ಲವೂ ಯಾವಾಗಲೂ ಬರೀ ಕೆಟ್ಟದ್ದೆಂದೂ ಯೆಹೋವ ದೇವರು ಕಂಡರು.</verse>
				<verse number="6">ಯೆಹೋವ ದೇವರು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ನಿಟ್ಟುಸಿರುಬಿಟ್ಟು, ತಮ್ಮ ಹೃದಯದಲ್ಲಿ ನೊಂದುಕೊಂಡರು.</verse>
				<verse number="7">ಇದಲ್ಲದೆ ಯೆಹೋವ ದೇವರು, “ನಾನು ಸೃಷ್ಟಿಸಿದ ಮನುಷ್ಯನಿಂದ ಹಿಡಿದು, ಸಕಲ ಪ್ರಾಣಿ, ಆಕಾಶದ ಪಕ್ಷಿಗಳನ್ನೂ ನೆಲದ ಮೇಲೆ ಹರಿದಾಡುವ ಜೀವಿಗಳನ್ನು, ಭೂಮಿಯ ಮೇಲಿನಿಂದ ಎಲ್ಲವನ್ನು ನಾಶಮಾಡುವೆನು. ನಾನು ಅವರನ್ನು ಉಂಟುಮಾಡಿದ್ದಕ್ಕೆ ದುಃಖಪಡುತ್ತೇನೆ,” ಎಂದರು.</verse>
				<verse number="8">ಆದರೆ ನೋಹನಿಗೆ ಯೆಹೋವ ದೇವರ ದಯೆ ದೊರಕಿತು.</verse>
				<verse number="9">ಇದು ನೋಹನ ಮತ್ತು ಅವನ ವಂಶದವರ ಚರಿತ್ರೆ: ನೋಹನು ನೀತಿವಂತನೂ ತನ್ನ ಕಾಲದವರಲ್ಲಿ ನಿರ್ದೋಷಿಯೂ ಆಗಿದ್ದನು. ಅವನು ದೇವರೊಂದಿಗೆ ವಿಶ್ವಾಸದಿಂದ ನಡೆಯುತ್ತಿದ್ದನು.</verse>
				<verse number="10">ನೋಹನಿಗೆ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳಿದ್ದರು.</verse>
				<verse number="11">ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು. ಹಿಂಸಾಚಾರವು ಲೋಕವನ್ನು ತುಂಬಿಕೊಂಡಿತ್ತು.</verse>
				<verse number="12">ದೇವರು ಭೂಮಿಯನ್ನು ನೋಡಲಾಗಿ ಅದು ಕೆಟ್ಟುಹೋಗಿತ್ತು, ಮನುಷ್ಯರೆಲ್ಲರೂ ಭೂಮಿಯ ಮೇಲೆ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು.</verse>
				<verse number="13">ಆಗ ದೇವರು ನೋಹನಿಗೆ, “ನಾನು ಮನುಷ್ಯರೆಲ್ಲರಿಗೂ ಅಂತ್ಯವನ್ನು ತೀರ್ಮಾನಿಸಿದ್ದೇನೆ. ಅವರಿಂದ ಭೂಮಿಯು ಹಿಂಸಾಚಾರದಿಂದ ತುಂಬಿದೆ. ನಾನು ಭೂಮಿಯೊಂದಿಗೆ ಅವರನ್ನೂ ನಾಶಮಾಡುವೆನು.</verse>
				<verse number="14">ಆದ್ದರಿಂದ ನಿನಗೋಸ್ಕರವಾಗಿ ತುರಾಯಿ ಮರದಿಂದ ನಾವೆಯನ್ನು ಮಾಡಿಕೋ; ಅದರಲ್ಲಿ ಕೋಣೆಗಳನ್ನು ಮಾಡು, ಅದರ ಒಳಭಾಗಕ್ಕೂ ಹೊರಭಾಗಕ್ಕೂ ರಾಳವನ್ನು ಹಚ್ಚು.</verse>
				<verse number="15">ನೀನು ಅದನ್ನು ಈ ರೀತಿಯಾಗಿ ಮಾಡತಕ್ಕದ್ದು: ನಾವೆಯ ಉದ್ದವು ಸುಮಾರು ಒಂದುನೂರ ಮೂವತ್ತೈದು ಮೀಟರ್, ಅದರ ಅಗಲ ಇಪ್ಪತ್ತಮೂರು ಮೀಟರ್, ಅದರ ಎತ್ತರ ಹದಿನಾಲ್ಕು ಮೀಟರ್ ಇರಬೇಕು.</verse>
				<verse number="16">ಅದಕ್ಕೆ ಚಾವಣಿಯನ್ನು ಮಾಡು, ಅದರ ಕೆಳಗೆ ಹದಿನೆಂಟು ಇಂಚಿನ ಕಿಟಕಿಯನ್ನು ನಾವೆಯ ಸುತ್ತಲೂ ಮಾಡಬೇಕು; ಅದರ ಪಕ್ಕದಲ್ಲಿ ನಾವೆಯ ಬಾಗಿಲನ್ನು ಇಡಬೇಕು. ಕೆಳಗಿನದು, ಎರಡನೆಯದು, ಮೂರನೆಯದು ಎಂಬ ಮೂರು ಅಂತಸ್ತುಗಳನ್ನು ಮಾಡಬೇಕು.</verse>
				<verse number="17">ನಾನು ಆಕಾಶದ ಕೆಳಗಿರುವ ಜೀವಶ್ವಾಸವುಳ್ಳ ಸಕಲ ಪ್ರಾಣಿಗಳನ್ನು ನಾಶಮಾಡುವುದಕ್ಕೆ ಜಲಪ್ರಳಯವನ್ನು ಭೂಮಿಯ ಮೇಲೆ ಬರಮಾಡುತ್ತೇನೆ. ಆಗ ಭೂಮಿಯಲ್ಲಿರುವುದೆಲ್ಲವೂ ನಾಶವಾಗುವುದು.</verse>
				<verse number="18">ಆದರೆ ನಾನು ನಿನ್ನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು. ನೀನು, ನಿನ್ನ ಸಂಗಡ ನಿನ್ನ ಮಕ್ಕಳು, ನಿನ್ನ ಹೆಂಡತಿ ಹಾಗೂ ಸೊಸೆಯರು ನಾವೆಯೊಳಗೆ ಸೇರಬೇಕು.</verse>
				<verse number="19">ಜೀವಿಗಳ ಪ್ರತಿಜಾತಿಯಲ್ಲೂ ಒಂದು ಗಂಡು, ಒಂದು ಹೆಣ್ಣು; ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ ನಿನ್ನೊಂದಿಗೆ ಜೀವಂತವಾಗಿ ಉಳಿಸಿಕೊಳ್ಳಬೇಕು.</verse>
				<verse number="20">ಪಕ್ಷಿಗಳಲ್ಲಿ ಅವುಗಳ ಜಾತಿಗನುಸಾರವಾಗಿ, ಪ್ರಾಣಿಗಳಲ್ಲಿ ಅವುಗಳ ಜಾತಿಗನುಸಾರವಾಗಿ ಮತ್ತು ನೆಲದ ಮೇಲೆ ಹರಿದಾಡುವ ಸಕಲ ಜೀವಿಗಳಲ್ಲಿ ಅವುಗಳ ಜಾತಿಗನುಸಾರವಾಗಿ ಎರಡೆರಡು ಬದುಕಿಬಾಳಲು ಅವುಗಳನ್ನು ನೀನು ಕಾಪಾಡುವಂತೆ ನಿನ್ನ ಬಳಿಗೆ ಬರುವುವು.</verse>
				<verse number="21">ನೀನು, ಎಲ್ಲ ವಿಧವಾದ ಆಹಾರ ಪದಾರ್ಥಗಳನ್ನು ಕೂಡಿಸಿಡಬೇಕು. ಅದು ನಿಮಗೂ ಮತ್ತು ಪ್ರಾಣಿಗಳಿಗೂ ಆಹಾರವಾಗಿರಬೇಕು,” ಎಂದು ಹೇಳಿದರು.</verse>
				<verse number="22">ದೇವರು ಆಜ್ಞಾಪಿಸಿದ ಪ್ರಕಾರವೇ ನೋಹನು ಎಲ್ಲವನ್ನು ಮಾಡಿದನು.</verse>
			</chapter>
			<chapter number="7">
				<verse number="1">ಯೆಹೋವ ದೇವರು ನೋಹನಿಗೆ, “ನೀನೂ, ನಿನ್ನ ಮನೆಯವರೆಲ್ಲರೂ ನಾವೆಯೊಳಗೆ ಸೇರಿಕೊಳ್ಳಿರಿ. ಏಕೆಂದರೆ ಈ ಕಾಲದವರಲ್ಲಿ ನೀನೊಬ್ಬನೇ ನನ್ನ ಮುಂದೆ ನೀತಿವಂತನಾಗಿರುವುದನ್ನು ನಾನು ನೋಡಿದ್ದೇನೆ.</verse>
				<verse number="2">ಎಲ್ಲಾ ಶುದ್ಧ ಪಶುಗಳಲ್ಲಿ ಏಳೇಳು ಗಂಡು, ಹೆಣ್ಣುಗಳನ್ನೂ, ಶುದ್ಧವಲ್ಲದ ಪಶುಗಳಲ್ಲಿ ಎರಡೆರಡು ಗಂಡು, ಹೆಣ್ಣುಗಳನ್ನೂ ನಿನ್ನೊಂದಿಗೆ ತೆಗೆದುಕೊಳ್ಳಬೇಕು.</verse>
				<verse number="3">ಆಕಾಶದ ಪಕ್ಷಿಗಳಲ್ಲಿ ಗಂಡು, ಹೆಣ್ಣು ಏಳೇಳರಂತೆ ತೆಗೆದುಕೊಂಡು, ಭೂಮಿಯ ಮೇಲೆಲ್ಲಾ ಅವುಗಳ ಸಂತತಿಯನ್ನು ಜೀವಂತವಾಗಿ ಉಳಿಸಬೇಕು.</verse>
				<verse number="4">ಏಳು ದಿವಸಗಳಾದ ಮೇಲೆ ಭೂಮಿಯ ಮೇಲೆ ನಲವತ್ತು ದಿನ ಹಗಲಿರುಳು ಮಳೆಯು ಬರುವಂತೆ ನಾನು ಮಾಡುವೆನು. ನಾನು ಉಂಟುಮಾಡಿದ ಪ್ರತಿಯೊಂದು ಜೀವರಾಶಿಯನ್ನೂ ಭೂಮಿಯ ಮೇಲಿಂದ ಅಳಿಸಿಬಿಡುತ್ತೇನೆ,” ಎಂದರು.</verse>
				<verse number="5">ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರವೇ ನೋಹನು ಎಲ್ಲವನ್ನೂ ಮಾಡಿದನು.</verse>
				<verse number="6">ಜಲಪ್ರಳಯವು ಭೂಮಿಯ ಮೇಲೆ ಉಂಟಾದಾಗ ನೋಹನು ಆರುನೂರು ವರ್ಷದವನಾಗಿದ್ದನು.</verse>
				<verse number="7">ಆಗ ನೋಹನು ಪ್ರಳಯದ ನಿಮಿತ್ತವಾಗಿ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯಲ್ಲಿ ಸೇರಿದನು.</verse>
				<verse number="8">ಶುದ್ಧ ಪ್ರಾಣಿಗಳಲ್ಲಿಯೂ, ಅಶುದ್ಧ ಪ್ರಾಣಿಗಳಲ್ಲಿ, ಪಕ್ಷಿಗಳಲ್ಲಿ ಮತ್ತು ನೆಲದ ಮೇಲೆ ಹರಿದಾಡುವ ಜೀವಿಗಳೆಲ್ಲವೂ</verse>
				<verse number="9">ದೇವರು ನೋಹನಿಗೆ ಆಜ್ಞಾಪಿಸಿದಂತೆಯೇ ಗಂಡುಹೆಣ್ಣುಗಳು ಜೋಡಿ ಜೋಡಿಯಾಗಿ ಬಂದು ನೋಹನೊಂದಿಗೆ ನಾವೆಯಲ್ಲಿ ಸೇರಿಕೊಂಡವು.</verse>
				<verse number="10">ಏಳು ದಿವಸಗಳಾದ ನಂತರ ಜಲಪ್ರಳಯವು ಭೂಮಿಯ ಮೇಲೆ ಬಂತು.</verse>
				<verse number="11">ನೋಹನ ಜೀವನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾಸಾಗರದ ಸೆಲೆಗಳು ಒಡೆದವು. ಆಕಾಶದ ಪ್ರವಾಹದ ದ್ವಾರಗಳು ತೆರೆದವು.</verse>
				<verse number="12">ನಲವತ್ತು ದಿವಸ ಹಗಲಿರುಳು ಭೂಮಿಯ ಮೇಲೆ ದೊಡ್ಡ ಮಳೆ ಸುರಿಯಿತು.</verse>
				<verse number="13">ಅದೇ ದಿನದಲ್ಲಿ ನೋಹನು ಮತ್ತು ಅವನ ಪುತ್ರರಾದ ಶೇಮ್, ಹಾಮ್, ಯೆಫೆತ್ ಇವರೂ ನೋಹನ ಹೆಂಡತಿಯೂ ಅವನ ಪುತ್ರರ ಹೆಂಡತಿಯರೂ ನಾವೆಯನ್ನು ಪ್ರವೇಶಿಸಿದರು.</verse>
				<verse number="14">ಇದಲ್ಲದೆ ತಮ್ಮ ತಮ್ಮ ಜಾತಿಗನುಸಾರವಾಗಿ ಎಲ್ಲಾ ಕಾಡು ಮೃಗಗಳೂ ಎಲ್ಲಾ ಪಶುಗಳೂ ನೆಲದ ಮೇಲೆ ಹರಿದಾಡುವ ಎಲ್ಲಾ ಜೀವಿಗಳೂ ಎಲ್ಲಾ ಪಕ್ಷಿಗಳೂ ಎಲ್ಲಾ ವಿಧವಾದ ರೆಕ್ಕೆಯಿರುವ ಜೀವಿಗಳೂ ಪ್ರವೇಶಿಸಿದವು.</verse>
				<verse number="15">ಹೀಗೆ ಜೀವಶ್ವಾಸವಿರುವ ಎಲ್ಲಾ ಸೃಷ್ಟಿಗಳಲ್ಲಿ ಎರಡೆರಡು ನೋಹನ ಬಳಿಗೆ ನಾವೆಯೊಳಗೆ ಹೋದವು.</verse>
				<verse number="16">ದೇವರು ನೋಹನಿಗೆ ಆಜ್ಞಾಪಿಸಿದಂತೆ ಎಲ್ಲಾ ಪ್ರಾಣಿಗಳಲ್ಲಿ ಒಂದು ಗಂಡು, ಒಂದು ಹೆಣ್ಣು ಈ ಮೇರೆಗೆ ಸೇರಿದವು. ಯೆಹೋವ ದೇವರು ನೋಹನನ್ನು ಒಳಗೆ ಬಿಟ್ಟು ಬಾಗಿಲನ್ನು ಮುಚ್ಚಿದರು.</verse>
				<verse number="17">ನಲವತ್ತು ದಿನ ಭೂಮಿಯ ಮೇಲೆ ಪ್ರಳಯವು ಬಂದು, ನೀರು ಹೆಚ್ಚಿ ನಾವೆಯನ್ನು ಮೇಲಕ್ಕೆ ಎತ್ತಲು ಅದು ಭೂಮಿಯಿಂದ ತೇಲಾಡಿತು.</verse>
				<verse number="18">ನೀರು ಪ್ರಬಲವಾಗಿ ಭೂಮಿಯ ಮೇಲೆ ಹೆಚ್ಚಿದಾಗ ನಾವೆಯು ನೀರಿನ ಮೇಲೆ ಚಲಿಸಿತು.</verse>
				<verse number="19">ಭೂಮಿಯ ಮೇಲೆ ನೀರು ಅಧಿಕವಾಗಿ ಪ್ರಬಲವಾದದ್ದರಿಂದ ಆಕಾಶಮಂಡಲದ ಕೆಳಗಿರುವ ಎಲ್ಲಾ ದೊಡ್ಡ ಬೆಟ್ಟಗಳೂ ಮುಚ್ಚಿಕೊಂಡವು.</verse>
				<verse number="20">ನೀರು ಬೆಟ್ಟವನ್ನು ಮುಚ್ಚಿ ಅವುಗಳ ಮೇಲೆ ಸುಮಾರು ಏಳು ಮೀಟರಷ್ಟು ಏರಿತು.</verse>
				<verse number="21">ಪಕ್ಷಿಗಳು, ಪಶುಗಳು, ಕಾಡುಮೃಗಗಳು, ನೆಲದ ಮೇಲೆ ಚಲಿಸುವ ಸಕಲ ಪ್ರಾಣಿಗಳು ಮತ್ತು ಮನುಷ್ಯರು ನಾಶವಾದರು.</verse>
				<verse number="22">ಒಣನೆಲದ ಮೇಲಿದ್ದ ಮೂಗಿನಿಂದ ಶ್ವಾಸಬೀಡುವ ಜೀವಿಗಳೆಲ್ಲವೂ ಸತ್ತು ಹೋದವು.</verse>
				<verse number="23">ಹೀಗೆ ಮನುಷ್ಯರು, ಪಶುಪಕ್ಷಿ, ಕ್ರಿಮಿಕೀಟಗಳು, ಭೂಮಿಯ ಮೇಲಿದ್ದ ಎಲ್ಲಾ ಜೀವರಾಶಿಗಳೂ ನಾಶವಾಯಿತು. ಅವು ಭೂಮಿಯ ಮೇಲಿಂದ ಅಳಿದುಹೋದವು. ನೋಹನು ಮತ್ತು ಅವನ ಸಂಗಡ ನಾವೆಯಲ್ಲಿದ್ದವರು ಮಾತ್ರ ಜೀವಂತವಾಗಿ ಉಳಿದರು.</verse>
				<verse number="24">ಜಲವು ಭೂಮಿಯ ಮೇಲೆ ನೂರೈವತ್ತು ದಿನ ಮುಂದುವರೆಯಿತು.</verse>
			</chapter>
			<chapter number="8">
				<verse number="1">ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಕಾಡುಮೃಗಗಳನ್ನೂ ಪಶುಗಳನ್ನೂ ನೆನಪಿಗೆ ತಂದುಕೊಂಡು, ಭೂಲೋಕದ ಮೇಲೆ ಗಾಳಿಬೀಸುವಂತೆ ಮಾಡಲಾಗಿ, ನೀರು ತಗ್ಗಿತು.</verse>
				<verse number="2">ಮಾತ್ರವಲ್ಲದೆ ಸಾಗರದ ಸೆಲೆಗಳೂ, ಆಕಾಶದ ದ್ವಾರಗಳೂ ಮುಚ್ಚಿಹೋದವು. ಆಕಾಶದಿಂದ ಬೀಳುವ ಮಳೆ ನಿಂತುಹೋಯಿತು.</verse>
				<verse number="3">ಹೀಗೆ ನೀರು ಭೂಮಿಯ ಮೇಲಿನಿಂದ ಕ್ರಮವಾಗಿ ಇಳಿಯಿತು. ನೀರು ನೂರೈವತ್ತು ದಿನಗಳ ಅಂತ್ಯದಲ್ಲಿ ಕಡಿಮೆಯಾಯಿತು.</verse>
				<verse number="4">ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಬೆಟ್ಟಗಳ ಮೇಲೆ ನಿಂತಿತು.</verse>
				<verse number="5">ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆಯಾಗುತ್ತಾ ಬಂತು, ಹತ್ತನೆಯ ತಿಂಗಳಿನ ಮೊದಲಿನ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಿಸಲಾರಂಭಿಸಿದವು.</verse>
				<verse number="6">ನಲವತ್ತು ದಿನಗಳಾದ ಮೇಲೆ, ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದನು.</verse>
				<verse number="7">ಅವನು ಒಂದು ಕಾಗೆಯನ್ನು ಹೊರಕ್ಕೆ ಬಿಟ್ಟನು, ಅದು ಭೂಮಿಯ ಮೇಲಿದ್ದ ನೀರು ಒಣಗುವ ತನಕ ಹೋಗುತ್ತಾ ಬರುತ್ತಾ ಇತ್ತು.</verse>
				<verse number="8">ಭೂಮುಖದ ಮೇಲೆ ಜಲವು ಕಡಿಮೆಯಾಯಿತೋ ಇಲ್ಲವೋ ಎಂದು ನೋಡುವಂತೆ, ಒಂದು ಪಾರಿವಾಳವನ್ನೂ ಹೊರಕ್ಕೆ ಕಳುಹಿಸಿದನು.</verse>
				<verse number="9">ಆದರೆ ನೀರು ಭೂಮಿಯ ಮೇಲೆಲ್ಲಾ ಇರುವುದರಿಂದ ಪಾರಿವಾಳವು ಕಾಲಿಡುವುದಕ್ಕೂ ಸ್ಥಳವನ್ನು ಕಾಣದೆ, ಅವನ ಬಳಿಗೆ ನಾವೆಗೆ ಹಿಂದಿರುಗಿತು. ಅವನು ಕೈಚಾಚಿ ಅದನ್ನು ಹಿಡಿದು, ನಾವೆಯಲ್ಲಿ ತನ್ನ ಬಳಿಗೆ ತೆಗೆದುಕೊಂಡನು.</verse>
				<verse number="10">ಅವನು ಇನ್ನೂ ಏಳು ದಿವಸ ತಡೆದು, ಪಾರಿವಾಳವನ್ನು ಪುನಃ ನಾವೆಯೊಳಗಿಂದ ಹೊರಕ್ಕೆ ಬಿಟ್ಟನು.</verse>
				<verse number="11">ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ತಿರುಗಿ ಬರಲು, ಅದರ ಬಾಯಿಯಲ್ಲಿ ಓಲಿವ್ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದಿದೆಯೆಂದು ತಿಳಿದುಕೊಂಡನು.</verse>
				<verse number="12">ಇನ್ನೂ ಏಳು ದಿನಗಳು ತಡೆದು, ಆ ಪಾರಿವಾಳವನ್ನು ಬಿಟ್ಟಾಗ, ಅದು ತಿರುಗಿ ಅವನ ಬಳಿಗೆ ಬರಲೇ ಇಲ್ಲ.</verse>
				<verse number="13">ಆರುನೂರ ಒಂದನೆಯ ವರ್ಷದ, ಮೊದಲನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಮೇಲಿನ ಮುಚ್ಚಳವನ್ನು ತೆಗೆದು ನೋಡಲಾಗಿ, ನೆಲವು ಒಣಗಿತ್ತು.</verse>
				<verse number="14">ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ ಭೂಮಿಯು ಒಣಗಿತ್ತು.</verse>
				<verse number="15">ಆಗ ದೇವರು ನೋಹನಿಗೆ,</verse>
				<verse number="16">“ನೀನು, ನಿನ್ನ ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ನಾವೆಯನ್ನು ಬಿಟ್ಟು ಹೊರಗೆ ಬಾ.</verse>
				<verse number="17">ನಿನ್ನ ಬಳಿಯಲ್ಲಿರುವ ಪಕ್ಷಿ, ಪಶು, ಕ್ರಿಮಿ, ಮುಂತಾದ ಎಲ್ಲಾ ಜೀವಿಗಳನ್ನು ಹೊರಗೆ ತೆಗೆದುಕೊಂಡು ಬಾ. ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ, ಅವು ಅಭಿವೃದ್ಧಿಯಾಗಿ ಹೆಚ್ಚಲಿ,” ಎಂದು ಹೇಳಿದರು.</verse>
				<verse number="18">ಹೀಗೆ ನೋಹನು, ಹೆಂಡತಿ, ಮಕ್ಕಳು, ಸೊಸೆಯರ ಸಹಿತವಾಗಿ ಹೊರಗೆ ಬಂದನು.</verse>
				<verse number="19">ಎಲ್ಲಾ ಮೃಗಗಳೂ ಎಲ್ಲಾ ಕ್ರಿಮಿಗಳೂ ಎಲ್ಲಾ ಪಕ್ಷಿಗಳೂ ಭೂಮಿಯಲ್ಲಿ ಹರಿದಾಡುವ ಎಲ್ಲವೂ ತಮ್ಮ ತಮ್ಮ ಜಾತಿಗನುಸಾರವಾಗಿ ನಾವೆಯೊಳಗಿಂದ ಹೊರಗೆ ಬಂದವು.</verse>
				<verse number="20">ನೋಹನು ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಶುದ್ಧವಾದ ಪ್ರತಿ ಪಶುಗಳಿಂದಲೂ ಶುದ್ಧವಾದ ಪ್ರತಿ ಪಕ್ಷಿಗಳಿಂದಲೂ ಕೆಲವೊಂದನ್ನು ಆಯ್ದುಕೊಂಡು, ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸಿದನು.</verse>
				<verse number="21">ಅದರ ಸುವಾಸನೆಯು ಯೆಹೋವ ದೇವರಿಗೆ ಗಮಗಮಿಸಲು, ಅವರು ಹೃದಯದೊಳಗೆ, “ಮನುಷ್ಯನ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಮನುಷ್ಯರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಸಂಹರಿಸಿದಂತೆ ಇನ್ನು ಮೇಲೆ ಸಂಹರಿಸುವುದಿಲ್ಲ.</verse>
				<verse number="22">“ಭೂಮಿಯು ಇರುವವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ; ತಂಪೂ ಸೆಕೆಯೂ; ಬೇಸಿಗೆಯೂ ಹಿಮಕಾಲವೂ; ಹಗಲೂ ರಾತ್ರಿಯೂ ನಿಂತುಹೋಗುವುದಿಲ್ಲ.”</verse>
			</chapter>
			<chapter number="9">
				<verse number="1">ದೇವರು ನೋಹನನ್ನೂ, ಅವನ ಪುತ್ರರನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿ, ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.</verse>
				<verse number="2">ಭೂಮಿಯ ಎಲ್ಲಾ ಮೃಗಗಳ ಮೇಲೆಯೂ ಆಕಾಶದ ಎಲ್ಲಾ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಸಮುದ್ರದ ಎಲ್ಲಾ ಮೀನುಗಳ ಮೇಲೆಯೂ ನಿಮ್ಮ ಭಯ ಬೆದರಿಕೆಯು ಇರುವುದು. ನಿಮ್ಮ ಕೈಗೆ ಅವು ಕೊಡಲಾಗಿವೆ.</verse>
				<verse number="3">ಚಲಿಸುವ ಜೀವಜಂತುಗಳೆಲ್ಲಾ ನಿಮಗೆ ಆಹಾರವಾಗಿ ಇರಲಿ. ಹಸಿರು ಪಲ್ಯಗಳ ಹಾಗೆಯೇ, ಅವುಗಳನ್ನೆಲ್ಲಾ ನಾನು ನಿಮಗೆ ಕೊಟ್ಟಿದ್ದೇನೆ.</verse>
				<verse number="4">“ಆದರೆ ಮಾಂಸವನ್ನು ಅದರ ಜೀವವಾಗಿರುವ ರಕ್ತದೊಂದಿಗೆ ನೀವು ತಿನ್ನಬಾರದು.</verse>
				<verse number="5">ನಿಮ್ಮ ರಕ್ತ ಸುರಿಸಿ, ಪ್ರಾಣ ತೆಗೆಯುವವರಿಗೆ, ಮುಯ್ಯಿತೀರಿಸುವೆನು, ಮೃಗವಾಗಿದ್ದರೆ ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಇನ್ನೊಬ್ಬ ಮನುಷ್ಯನಾದುದರಿಂದ ಹತಿಸಿದವನಿಗೂ ಮುಯ್ಯಿತೀರಿಸುವೆನು.</verse>
				<verse number="6">“ಯಾರಾದರೂ ಮನುಷ್ಯರ ರಕ್ತವನ್ನು ಸುರಿಸುತ್ತಾರೋ, ಅವರ ರಕ್ತವನ್ನು ಮನುಷ್ಯರೇ ಸುರಿಸುವರು. ಏಕೆಂದರೆ ದೇವರು ತಮ್ಮ ಸ್ವರೂಪದಲ್ಲಿಯೇ ಮನುಷ್ಯರನ್ನು ಸೃಷ್ಟಿಸಿದರು.</verse>
				<verse number="7">ಆದ್ದರಿಂದ ನೀವು ಬಹುಸಂತಾನವಾಗಿ ಹೆಚ್ಚಿರಿ. ಸಂಖ್ಯೆಯಲ್ಲಿಯೂ ಅಧಿಕವಾಗಿ ಭೂಮಿಯಲ್ಲಿ ಹೆಚ್ಚಿರಿ,” ಎಂದು ಹೇಳಿದರು.</verse>
				<verse number="8">ಇದಲ್ಲದೆ ದೇವರು ನೋಹನಿಗೂ ಅವನ ಸಂಗಡ ಇದ್ದ ಅವನ ಪುತ್ರರಿಗೂ ಹೇಳಿದ್ದೇನೆಂದರೆ,</verse>
				<verse number="9">“ನಾನು ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡವೂ ನಿಮ್ಮ ತರುವಾಯ ನಿಮ್ಮ ಸಂತತಿಯವರ ಸಂಗಡವೂ</verse>
				<verse number="10">ನಿಮ್ಮ ಜೊತೆ ನಾವೆಯೊಳಗಿಂದ ಹೊರಗೆ ಬಂದ ಎಲ್ಲಾ ಜೀವಿಗಳ ಸಹಿತ ಅಂದರೆ ಪಕ್ಷಿಗಳು, ಪಶುಗಳು, ಕಾಡುಮೃಗಗಳು ಮತ್ತು ಭೂಮಿಯ ಎಲ್ಲಾ ಜೀವಿಗಳೊಂದಿಗೆ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ</verse>
				<verse number="11">ಜಲಪ್ರಳಯದಿಂದ ಇನ್ನು ಮೇಲೆ ಎಲ್ಲಾ ಜೀವಿಗಳು ನಾಶವಾಗುವುದಿಲ್ಲ. ಭೂಮಿಯನ್ನು ಹಾಳು ಮಾಡುವುದಕ್ಕೆ ಇನ್ನು ಮುಂದೆ ಇಂಥ ಪ್ರಳಯವು ಇರುವುದಿಲ್ಲ ಎಂದು ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ.”</verse>
				<verse number="12">ದೇವರು ಮತ್ತೆ ಹೇಳಿದ್ದೇನೆಂದರೆ, “ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳವರೆಗೆ ನಾನು ಮಾಡುವ ಒಡಂಬಡಿಕೆಗೆ ಗುರುತು ಇದೆ:</verse>
				<verse number="13">ನನ್ನ ಮಳೆಬಿಲ್ಲನ್ನು ಮೇಘಗಳಲ್ಲಿ ಇಟ್ಟಿದ್ದೇನೆ, ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವುದು.</verse>
				<verse number="14">ನಾನು ಭೂಮಿಯ ಮೇಲೆ ಮೇಘಗಳನ್ನು ಬರಮಾಡುವಾಗ, ಆ ಮಳೆಬಿಲ್ಲು ಮೇಘಗಳಲ್ಲಿ ಕಂಡುಬರುವುದು.</verse>
				<verse number="15">ಆಗ ನಾನು ನನಗೂ ನಿಮಗೂ ಪ್ರತಿಯೊಂದು ಜೀವಿಗಳಿಗೂ ಮಧ್ಯೆಯಿರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಎಲ್ಲಾ ಜೀವಿಗಳನ್ನು ನಾಶಮಾಡುವ ಪ್ರಳಯವಾಗುವುದೇ ಇಲ್ಲ.</verse>
				<verse number="16">ಆ ಮಳೆಬಿಲ್ಲು ಮೇಘಗಳಲ್ಲಿರುವಾಗ, ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ಇರುವ ನಿತ್ಯವಾದ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುವ ಹಾಗೆ, ನಾನು ಅದನ್ನು ನೋಡುವೆನು.”</verse>
				<verse number="17">ನಂತರ ದೇವರು ನೋಹನಿಗೆ, “ಈ ಮಳೆಬಿಲ್ಲು ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಮಧ್ಯದಲ್ಲಿ ಸ್ಥಾಪಿಸಿದ ಒಡಂಬಡಿಕೆಯ ಗುರುತಾಗಿದೆ,” ಎಂದು ಹೇಳಿದರು.</verse>
				<verse number="18">ನಾವೆಯೊಳಗಿಂದ ಹೊರಬಂದ ನೋಹನ ಪುತ್ರರು ಯಾರೆಂದರೆ ಶೇಮ್, ಹಾಮ್, ಯೆಫೆತ್. ಹಾಮನು ಕಾನಾನನ ತಂದೆಯು.</verse>
				<verse number="19">ಈ ಮೂವರು ನೋಹನ ಮಕ್ಕಳು; ಭೂಮಿಯ ಮೇಲೆ ಚೆದರಿದ ಎಲ್ಲ ಜನರು ಇವರಿಂದಲೇ ಉತ್ಪತ್ತಿಯಾದರು.</verse>
				<verse number="20">ನೋಹನು ವ್ಯವಸಾಯಗಾರನಾಗಿದ್ದನು. ಅವನು ಒಂದು ದ್ರಾಕ್ಷಿತೋಟವನ್ನು ಪ್ರಾರಂಭಿಸಿದನು.</verse>
				<verse number="21">ಅವನು ಅದರಿಂದ ಸ್ವಲ್ಪ ದ್ರಾಕ್ಷಾರಸವನ್ನು ಕುಡಿದು ಅಮಲೇರಿ, ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಮಲಗಿದ್ದನು.</verse>
				<verse number="22">ಕಾನಾನನ ತಂದೆ ಹಾಮನು, ತನ್ನ ತಂದೆಯ ಬೆತ್ತಲೆತನವನ್ನು ನೋಡಿ, ಹೊರಗಿದ್ದ ತನ್ನ ಸಹೋದರರಿಬ್ಬರಿಗೆ ತಿಳಿಸಿದನು.</verse>
				<verse number="23">ಆಗ ಶೇಮನೂ ಯೆಫೆತನೂ ಬಟ್ಟೆಯನ್ನು ತೆಗೆದುಕೊಂಡು, ತಮ್ಮಿಬ್ಬರ ಹೆಗಲಿನ ಮೇಲೆ ಇಟ್ಟು, ಹಿಂಭಾಗವಾಗಿ ಹೋಗಿ, ತಮ್ಮ ತಂದೆಯ ಬೆತ್ತಲೆತನವನ್ನು ಮುಚ್ಚಿದರು. ಅವರ ಮುಖಗಳು ಹಿಮ್ಮುಖವಾಗಿದ್ದುದರಿಂದ ತಮ್ಮ ತಂದೆಯ ಬೆತ್ತಲೆತನವನ್ನು ಅವರು ನೋಡಲಿಲ್ಲ.</verse>
				<verse number="24">ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚೆತ್ತು, ತನ್ನ ಕಿರಿಯ ಮಗನು ತನಗೆ ಮಾಡಿದ್ದನ್ನು ತಿಳಿದನು.</verse>
				<verse number="25">ನಂತರ ಅವನು ಹೀಗೆಂದನು, “ಕಾನಾನನು ಶಾಪಗ್ರಸ್ತನಾಗಲಿ, ಅವನು ತನ್ನ ಸಹೋದರರಿಗೆ ದಾಸಾನುದಾಸನಾಗಿರಲಿ.”</verse>
				<verse number="26">ನೋಹನು ಮತ್ತೆ ಹೇಳಿದ್ದು, “ಶೇಮನ ದೇವರಾದ ಯೆಹೋವ ಸ್ತುತಿಹೊಂದಲಿ. ಕಾನಾನನು ಶೇಮನಿಗೆ ದಾಸನಾಗಿರಲಿ.</verse>
				<verse number="27">ಯೆಫೆತನ ಮೇರೆಗಳನ್ನು ದೇವರು ವಿಸ್ತರಿಸಲಿ. ಯೆಫೆತನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ, ಕಾನಾನನು ಯೆಫೆತನಿಗೆ ದಾಸನಾಗಿರಲಿ.”</verse>
				<verse number="28">ಪ್ರಳಯವಾದ ಮೇಲೆ ನೋಹನು ಮುನ್ನೂರ ಐವತ್ತು ವರ್ಷ ಬದುಕಿದನು.</verse>
				<verse number="29">ನೋಹ ಒಟ್ಟು ಒಂಬೈನೂರ ಐವತ್ತು ವರ್ಷ ಜೀವಿಸಿ, ಸತ್ತನು.</verse>
			</chapter>
			<chapter number="10">
				<verse number="1">ನೋಹನ ಪುತ್ರರಾದ ಶೇಮ್, ಹಾಮ್, ಯೆಫೆತರಿಗೆ ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು. ಅವರ ವಂಶಾವಳಿ ಇದು:</verse>
				<verse number="2">ಯೆಫೆತನ ಪುತ್ರರು: ಗೋಮೆರ್, ಮಾಗೋಗ್, ಮಾದಯ್, ಯಾವಾನ್ ತೂಬಲ್, ಮೆಷೆಕ್ ಮತ್ತು ತೀರಾಸ್.</verse>
				<verse number="3">ಗೋಮೆರನ ಪುತ್ರರು: ಅಷ್ಕೆನಜ್, ರೀಫತ್, ತೋಗರ್ಮ.</verse>
				<verse number="4">ಯಾವಾನನ ಮಕ್ಕಳು: ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾನೀಮ್.</verse>
				<verse number="5">ಇವರಿಂದ ಕಡಲತೀರದ ಹಾಗೂ ದ್ವೀಪಗಳ ನಿವಾಸಿಯರು ತಮ್ಮ ಸ್ವಂತ ದೇಶ, ಭಾಷೆ, ಕುಲ ಜನಾಂಗಗಳ ಪ್ರಕಾರ ಹರಡುತ್ತಿದ್ದರು.</verse>
				<verse number="6">ಹಾಮನ ಪುತ್ರರು: ಕೂಷ್, ಈಜಿಪ್ಟ್, ಪೂಟ್, ಕಾನಾನ್.</verse>
				<verse number="7">ಕೂಷನ ಪುತ್ರರು: ಸೆಬ, ಹವೀಲ, ಸಬ್ತಾ, ರಾಮ, ಸಬ್ತೆಕ. ರಾಮನ ಪುತ್ರರು: ಶೆಬಾ ಮತ್ತು ದೆದಾನ್.</verse>
				<verse number="8">ಕೂಷನು ನಿಮ್ರೋದನ ತಂದೆಯಾಗಿದ್ದನು, ಇವನು ಭೂಮಿಯ ಮೇಲೆ ಬಲಿಷ್ಠ ಯುದ್ಧವೀರನಾದನು.</verse>
				<verse number="9">ಅವನು ಯೆಹೋವ ದೇವರ ಮುಂದೆ ಬಲಿಷ್ಠ ಬೇಟೆಗಾರನಾದನು. ಆದ್ದರಿಂದ, “ನಿಮ್ರೋದನಂತೆ ಯೆಹೋವ ದೇವರ ಮುಂದೆ ಬಲಿಷ್ಠ ಬೇಟೆಗಾರ” ಎಂಬ ಹೇಳಿಕೆ ಇಂದಿಗೂ ಇದೆ.</verse>
				<verse number="10">ಶಿನಾರ್ ದೇಶದಲ್ಲಿರುವ ಬಾಬಿಲೋನ್, ಯೆರೆಕ್, ಅಕ್ಕದ್, ಕಲ್ನೇ ಎಂಬವು ಅವನ ರಾಜ್ಯದ ಪ್ರಾರಂಭದ ಕೇಂದ್ರಗಳು.</verse>
				<verse number="11">ಆ ದೇಶದಿಂದ ಅವನು ಅಸ್ಸೀರಿಯಕ್ಕೆ ಹೋಗಿ ನಿನೆವೆ, ರೆಹೋಬೋತೀರ್, ಕೆಲಹ ಪಟ್ಟಣಗಳನ್ನೂ</verse>
				<verse number="12">ಮತ್ತು ನಿನೆವೆ ಹಾಗೂ ಕೆಲಹ ಮಧ್ಯದಲ್ಲಿರುವ ರೆಸೆನ್ ಮಹಾಪಟ್ಟಣವನ್ನು ಕಟ್ಟಿಸಿದನು.</verse>
				<verse number="13">ಈಜಿಪ್ಟನವರಿಂದ ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು</verse>
				<verse number="14">ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಹುಟ್ಟಿದರು. ಕಸ್ಲುಹ್ಯರಿಂದ ಫಿಲಿಷ್ಟಿಯರು ಬಂದವರು,</verse>
				<verse number="15">ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತನು ಹುಟ್ಟಿದನು.</verse>
				<verse number="16">ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು</verse>
				<verse number="17">ಹಿವ್ವಿಯರು, ಅರ್ಕಿಯರು, ಸೀನಿಯರು,</verse>
				<verse number="18">ಅರ್ವಾದಿಯರು, ಚೆಮಾರಿಯರು, ಹಮಾತಿಯರು, ಕಾನಾನನಿಂದ ಹುಟ್ಟಿದರು. ತರುವಾಯ ಕಾನಾನ್ ಕುಟುಂಬಗಳು ವಿಸ್ತಾರವಾಗಿ ಹರಡಿದವು.</verse>
				<verse number="19">ಕಾನಾನ್ಯರ ಮೇರೆಯು ಸೀದೋನ್ ಪಟ್ಟಣದಿಂದ ಗೆರಾರಿನ ಮಾರ್ಗವಾಗಿ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಮಾರ್ಗವಾಗಿ ಲೆಷಾ ಊರಿನವರೆಗೂ ಇರುತ್ತದೆ.</verse>
				<verse number="20">ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ, ತಮ್ಮ ಸೀಮೆ ಹಾಗು ದೇಶಗಳಲ್ಲಿಯೂ ಇರುವ ಹಾಮನ ಪುತ್ರರು.</verse>
				<verse number="21">ಯೆಫೆತನ ಹಿರಿಯ ಸಹೋದರನೂ ಏಬೆರನ ಮಕ್ಕಳ ಮೂಲಪುರುಷನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು.</verse>
				<verse number="22">ಶೇಮನ ಪುತ್ರರು: ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್, ಅರಾಮ್.</verse>
				<verse number="23">ಅರಾಮನ ಪುತ್ರರು: ಊಚ್, ಹೂಲ್, ಗೆತೆರ್ ಮತ್ತು ಮೆಷೆಕ್.</verse>
				<verse number="24">ಅರ್ಪಕ್ಷದ್ ಶೆಲಹನ ತಂದೆ; ಶೆಲಹ ಏಬೆರನ ತಂದೆ,</verse>
				<verse number="25">ಏಬೆರನಿಗೆ ಇಬ್ಬರು ಪುತ್ರರು ಹುಟ್ಟಿದರು. ಒಬ್ಬನಿಗೆ ಪೆಲೆಗ್ ಎಂದು ಹೆಸರಿಡಲಾಯಿತು, ಅವನ ಕಾಲದಲ್ಲಿ ಲೋಕದಲ್ಲಿಯ ಜನರು ವಿಭಾಗವಾದದ್ದರಿಂದ ಈ ಹೆಸರು ಅವನಿಗೆ ಬಂದಿತು. ಅವನ ತಮ್ಮನ ಹೆಸರು ಯೊಕ್ತಾನ್.</verse>
				<verse number="26">ಯೊಕ್ತಾನನ ಸಂತಾನದವರು: ಅಲ್ಮೋದಾದ್, ಶೆಲೆಪ್, ಹಜರ್ಮಾವೆತ್, ಯೆರಹ,</verse>
				<verse number="27">ಹದೋರಾಮ್, ಊಜಾಲ್, ದಿಕ್ಲಾ,</verse>
				<verse number="28">ಓಬಾಲ್, ಅಬೀಮಯೇಲ್, ಶೆಬಾ,</verse>
				<verse number="29">ಓಫೀರ್, ಹವೀಲಾ ಹಾಗೂ ಯೋಬಾಬ್ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಪುತ್ರರು.</verse>
				<verse number="30">ಅವರ ನಿವಾಸವು ಮೇಶಾ ನಾಡು ಮೊದಲುಗೊಂಡು ಪೂರ್ವದಿಕ್ಕಿನ ಸೆಫಾರ್ ಎಂಬ ಬೆಟ್ಟದವರೆಗೂ ಹರಡಿತ್ತು.</verse>
				<verse number="31">ಇವರೇ ತಮ್ಮ ಕುಟುಂಬಗಳ, ತಮ್ಮ ಭಾಷೆಗಳ ಪ್ರಕಾರ, ತಮ್ಮ ದೇಶಗಳಲ್ಲಿ, ತಮ್ಮ ಜನಾಂಗಗಳ ಪ್ರಕಾರ ಶೇಮನ ಪುತ್ರರು.</verse>
				<verse number="32">ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರವಾಗಿ ನೋಹನ ಪುತ್ರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ಹರಡಿಕೊಂಡವು.</verse>
			</chapter>
			<chapter number="11">
				<verse number="1">ಆ ಕಾಲದಲ್ಲಿ ಭೂಲೋಕದಲ್ಲೆಲ್ಲಾ ಒಂದೇ ಭಾಷೆಯಿತ್ತು. ಭಾಷಾಭೇದವೇನೂ ಇರಲಿಲ್ಲ.</verse>
				<verse number="2">ಜನರು ಪೂರ್ವದಿಕ್ಕಿಗೆ ಪ್ರಯಾಣ ಮಾಡುವಾಗ, ಶಿನಾರ್ ದೇಶದ ಬಯಲನ್ನು ಕಂಡು ಅಲ್ಲಿ ವಾಸಮಾಡಿದರು.</verse>
				<verse number="3">ಅಲ್ಲಿ ಅವರು, “ಬನ್ನಿರಿ ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು.</verse>
				<verse number="4">ಅನಂತರ ಅವರು, “ಬನ್ನಿರಿ, ನಾವು ಭೂಮಿಯ ಮೇಲೆ ಪಟ್ಟಣವನ್ನು ಕಟ್ಟೋಣ. ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನು ನಮಗೋಸ್ಕರವಾಗಿ ಕಟ್ಟಿಕೊಂಡು, ನಮಗೆ ಹೆಸರು ಸಂಪಾದಿಸಿಕೊಳ್ಳೋಣ. ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರುವುದಕ್ಕೆ ಆಸ್ಪದವಾಗುವದಿಲ್ಲ,” ಎಂದುಕೊಂಡರು.</verse>
				<verse number="5">ಜನರು ಕಟ್ಟುತ್ತಿದ್ದ ಪಟ್ಟಣವನ್ನೂ ಗೋಪುರವನ್ನೂ ನೋಡುವುದಕ್ಕೆ ಯೆಹೋವ ದೇವರು ಇಳಿದು ಬಂದರು.</verse>
				<verse number="6">ಯೆಹೋವ ದೇವರು, “ಇವರಿಗೆ ಒಂದೇ ಜನಾಂಗವೂ ಒಂದೇ ಭಾಷೆಯೂ ಇದೆ. ಇವರು ಇದನ್ನು ಮಾಡಲಾರಂಭಿಸಿದ್ದಾರೆ. ಈಗ ಇನ್ನು ಮುಂದೆ ಇವರು ಮಾಡುವುದಕ್ಕೆ ಉದ್ದೇಶಿಸುವುದು ಇವರಿಗೆ ಅಸಾಧ್ಯವಾಗುವುದಿಲ್ಲ.</verse>
				<verse number="7">ನಾವು ಇಳಿದು ಹೋಗಿ, ಇವರು ಒಬ್ಬರ ಮಾತನ್ನು ಒಬ್ಬರು ತಿಳಿಯದಂತೆ, ಇವರ ಭಾಷೆಯನ್ನು ಗಲಿಬಿಲಿ ಮಾಡೋಣ,” ಎಂದರು.</verse>
				<verse number="8">ಆದ್ದರಿಂದ ಯೆಹೋವ ದೇವರು ಅವರನ್ನು ಅಲ್ಲಿಂದ ಭೂಮಿಯ ಮೇಲೆಲ್ಲಾ ಚದರಿಸಿದರು. ಆಗ ಅವರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು.</verse>
				<verse number="9">ಆದಕಾರಣ ಅದಕ್ಕೆ, ಬಾಬೆಲ್ ಎಂದು ಹೆಸರಾಯಿತು. ಏಕೆಂದರೆ ಅಲ್ಲಿ ಯೆಹೋವ ದೇವರು ಇಡೀ ಜಗತ್ತಿನ ಭಾಷೆಗಳನ್ನು ಗಲಿಬಿಲಿ ಮಾಡಿದರು. ಅಲ್ಲಿಂದ ಯೆಹೋವ ದೇವರು ಅವರನ್ನು ಭೂಲೋಕದಲ್ಲೆಲ್ಲಾ ಚದರಿಸಿಬಿಟ್ಟರು.</verse>
				<verse number="10">ಶೇಮನ ವಂಶಾವಳಿ: ಶೇಮನು ನೂರು ವರ್ಷದವನಾಗಿದ್ದಾಗ, ಎಂದರೆ, ಪ್ರಳಯವಾಗಿ ಎರಡು ವರ್ಷಗಳಾದ ಮೇಲೆ ಅವನಿಂದ ಅರ್ಪಕ್ಷದನು ಹುಟ್ಟಿದನು.</verse>
				<verse number="11">ಶೇಮನಿಂದ ಅರ್ಪಕ್ಷದನು ಹುಟ್ಟಿದ ಮೇಲೆ, ಶೇಮನು ಐನೂರು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.</verse>
				<verse number="12">ಅರ್ಪಕ್ಷದನು ಮೂವತ್ತೈದು ವರ್ಷದವನಾಗಿರುವಾಗ, ಅವನಿಂದ ಶೆಲಹನು ಹುಟ್ಟಿದನು.</verse>
				<verse number="13">ಅರ್ಪಕ್ಷದನಿಂದ ಶೆಲಹನು ಹುಟ್ಟಿದ ಮೇಲೆ ಅರ್ಪಕ್ಷದನು ನಾನೂರ ಮೂರು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.</verse>
				<verse number="14">ಶೆಲಹನು ಮೂವತ್ತು ವರ್ಷದವನಾಗಿದ್ದಾಗ, ಅವನಿಂದ ಏಬೆರನು ಹುಟ್ಟಿದನು.</verse>
				<verse number="15">ಶೆಲಹನಿಂದ ಏಬೆರನು ಹುಟ್ಟಿದ ಮೇಲೆ, ಶೆಲಹನು ನಾನೂರ ಮೂರು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.</verse>
				<verse number="16">ಏಬೆರನು ಮೂವತ್ತ ನಾಲ್ಕು ವರ್ಷದವನಾಗಿದ್ದಾಗ, ಅವನಿಂದ ಪೆಲೆಗನು ಹುಟ್ಟಿದನು.</verse>
				<verse number="17">ಏಬೆರನಿಂದ ಪೆಲೆಗನು ಹುಟ್ಟಿದ ಮೇಲೆ, ಏಬೆರನು ನಾನೂರ ಮೂವತ್ತು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.</verse>
				<verse number="18">ಪೆಲೆಗನು ಮೂವತ್ತು ವರ್ಷದವನಾಗಿದ್ದಾಗ, ಅವನಿಂದ ರೆಗೂವನು ಹುಟ್ಟಿದನು.</verse>
				<verse number="19">ಪೆಲೆಗನಿಂದ ರೆಗೂವನು ಹುಟ್ಟಿದ ಮೇಲೆ, ಪೆಲೆಗನು ಇನ್ನೂರ ಒಂಬತ್ತು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.</verse>
				<verse number="20">ರೆಗೂವನು ಮೂವತ್ತೆರಡು ವರ್ಷದವನಾಗಿದ್ದಾಗ, ಅವನಿಂದ ಸೆರೂಗನು ಹುಟ್ಟಿದನು.</verse>
				<verse number="21">ರೆಗೂವನಿಂದ ಸೆರೂಗನು ಹುಟ್ಟಿದ ಮೇಲೆ, ರೆಗೂವನು ಇನ್ನೂರ ಏಳು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.</verse>
				<verse number="22">ಸೆರೂಗನು ಮೂವತ್ತು ವರ್ಷದವನಾಗಿದ್ದಾಗ, ಅವನಿಂದ ನಾಹೋರನು ಹುಟ್ಟಿದನು.</verse>
				<verse number="23">ಸೆರೂಗನಿಂದ ನಾಹೋರನು ಹುಟ್ಟಿದ ಮೇಲೆ, ಸೆರೂಗನು ಇನ್ನೂರು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.</verse>
				<verse number="24">ನಾಹೋರನು ಇಪ್ಪತ್ತೊಂಬತ್ತು ವರ್ಷದವನಾಗಿದ್ದಾಗ, ಅವನಿಂದ ತೆರಹನು ಹುಟ್ಟಿದನು.</verse>
				<verse number="25">ನಾಹೋರನಿಂದ ತೆರಹನು ಹುಟ್ಟಿದ ಮೇಲೆ, ನಾಹೋರನು ನೂರ ಹತ್ತೊಂಬತ್ತು ವರ್ಷ ಬದುಕಿದನು. ಅವನಿಂದ ಪುತ್ರರೂ ಪುತ್ರಿಯರೂ ಹುಟ್ಟಿದರು.</verse>
				<verse number="26">ತೆರಹನು ಎಪ್ಪತ್ತು ವರ್ಷದವನಾಗಿದ್ದಾಗ, ಅವನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು.</verse>
				<verse number="27">ತೆರಹನ ವಂಶಾವಳಿ: ತೆರಹನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ಹಾರಾನನಿಂದ ಲೋಟನು ಹುಟ್ಟಿದನು.</verse>
				<verse number="28">ಆದರೆ ಹಾರಾನನು ತಾನು ಹುಟ್ಟಿದ ಸೀಮೆಯಾದ ಕಸ್ದೀಯರ ಊರ್ ಎಂಬ ಪಟ್ಟಣದಲ್ಲಿ ತನ್ನ ತಂದೆ ತೆರಹನಿಗಿಂತ ಮೊದಲು ಸತ್ತನು.</verse>
				<verse number="29">ಅಬ್ರಾಮನೂ ನಾಹೋರನೂ ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ. ಈಕೆಯು ಹಾರಾನನ ಮಗಳು. ಹಾರಾನನು ಮಿಲ್ಕಾಳಿಗೂ ಇಸ್ಕಳಿಗೂ ತಂದೆ.</verse>
				<verse number="30">ಸಾರಯಳು ಬಂಜೆಯಾದದ್ದರಿಂದ ಆಕೆಗೆ ಮಕ್ಕಳಿರಲಿಲ್ಲ.</verse>
				<verse number="31">ತೆರಹನು ತನ್ನ ಮಗನಾದ ಅಬ್ರಾಮನನ್ನು ಮತ್ತು ತನಗೆ ಮೊಮ್ಮಗನೂ ಹಾರಾನನಿಗೆ ಮಗನೂ ಆದ ಲೋಟನನ್ನೂ ಹಾಗೂ ತನಗೆ ಸೊಸೆಯೂ ಅಬ್ರಾಮನಿಗೆ ಹೆಂಡತಿಯೂ ಆದ ಸಾರಯಳನ್ನೂ ಕರೆದುಕೊಂಡು ಕಾನಾನ್ ದೇಶಕ್ಕೆ ಹೋಗುವುದಕ್ಕಾಗಿ ಕಸ್ದೀಯರ ಊರ್ ಪಟ್ಟಣವನ್ನು ಬಿಟ್ಟು, ಹಾರಾನ್ ಎಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸವಾಗಿದ್ದನು.</verse>
				<verse number="32">ತೆರಹನು ಇನ್ನೂರ ಐದು ವರ್ಷ ಜೀವಿಸಿ, ಹಾರಾನಿನಲ್ಲಿ ಮರಣಹೊಂದಿದನು.</verse>
			</chapter>
			<chapter number="12">
				<verse number="1">ಯೆಹೋವ ದೇವರು ಅಬ್ರಾಮನಿಗೆ ಹೀಗೆ ಹೇಳಿದರು, “ನೀನು ನಿನ್ನ ಸ್ವದೇಶದಿಂದಲೂ ಬಂಧುಗಳಿಂದಲೂ ನಿನ್ನ ತಂದೆಯ ಮನೆಯಿಂದಲೂ ಹೊರಬಂದು, ನಾನು ನಿನಗೆ ತೋರಿಸುವ ನಾಡಿಗೆ ಹೋಗು.</verse>
				<verse number="2">“ನಾನು ನಿನ್ನನ್ನು ದೊಡ್ಡ ಜನಾಂಗದವನನ್ನಾಗಿ ಮಾಡಿ, ನಿನ್ನನ್ನು ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಸಿದ್ಧ ಮಾಡುವೆನು. ನೀನು ಆಶೀರ್ವಾದವಾಗಿ ಇರುವಿ.</verse>
				<verse number="3">ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು. ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.”</verse>
				<verse number="4">ಆದ್ದರಿಂದ ಯೆಹೋವ ದೇವರು ತನಗೆ ಹೇಳಿದ ಪ್ರಕಾರ, ಅಬ್ರಾಮನು ಹೊರಟುಹೋದನು. ಲೋಟನು ಅವನೊಂದಿಗೆ ಹೋದನು. ಅಬ್ರಾಮನು ಹಾರಾನಿನಿಂದ ಹೊರಟಾಗ ಎಪ್ಪತ್ತೈದು ವರ್ಷದವನಾಗಿದ್ದನು.</verse>
				<verse number="5">ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ, ತನ್ನ ಸಹೋದರನ ಮಗ ಲೋಟನನ್ನೂ, ತಾವು ಕೂಡಿಸಿಕೊಂಡಿದ್ದ ಎಲ್ಲಾ ಆಸ್ತಿಯನ್ನೂ, ಹಾರಾನಿನಲ್ಲಿ ಸಂಪಾದಿಸಿಕೊಂಡಿದ್ದ ಎಲ್ಲಾ ಜನರನ್ನೂ ತಮ್ಮ ಸಂಗಡ ಕರೆದುಕೊಂಡು ಕಾನಾನ್ ದೇಶಕ್ಕೆ ಸೇರಿದನು.</verse>
				<verse number="6">ಅಬ್ರಾಮನು ಆ ದೇಶದಲ್ಲಿ ಶೆಕೆಮ್ ಎಂಬ ಸ್ಥಳದ ಮೋರೆ ಎಂಬ ಮಹಾವೃಕ್ಷದವರೆಗೆ ಪ್ರಯಾಣಮಾಡಿದನು. ಆಗ ಕಾನಾನ್ಯರು ಆ ದೇಶದಲ್ಲಿ ಇದ್ದರು.</verse>
				<verse number="7">ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನು ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನು,” ಎಂದರು. ಆದ್ದರಿಂದ ಅವನು ಅಲ್ಲಿ ತನಗೆ ಕಾಣಿಸಿಕೊಂಡ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿದನು.</verse>
				<verse number="8">ಅಲ್ಲಿಂದ ಅವರು ಬೇತೇಲಿನ ಪೂರ್ವದ ಬೆಟ್ಟಕ್ಕೆ ಹೋಗಿ, ಪಶ್ಚಿಮಕ್ಕೆ ಬೇತೇಲ್, ಪೂರ್ವಕ್ಕೆ ಆಯಿ ಎಂಬ ಊರೂ ಇರುವ ಹಾಗೆ ತನ್ನ ಗುಡಾರವನ್ನು ಹಾಕಿಕೊಂಡನು. ಅಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಯೆಹೋವ ದೇವರ ಹೆಸರನ್ನು ಆರಾಧಿಸಿದನು.</verse>
				<verse number="9">ಅಬ್ರಾಮನು ಪ್ರಯಾಣಮಾಡಿ, ನೆಗೆವ ಕಡೆಗೆ ಹೊರಟನು.</verse>
				<verse number="10">ಆಗ ಆ ದೇಶದಲ್ಲಿ ಬರ ಉಂಟಾದದ್ದರಿಂದ, ಅಬ್ರಾಮನು ಈಜಿಪ್ಟಿನಲ್ಲಿ ಕೆಲವು ಸಮಯ ಇರಲು ಇಳಿದು ಹೋದನು. ಏಕೆಂದರೆ ಬರವು ಆ ದೇಶದಲ್ಲಿ ಘೋರವಾಗಿತ್ತು.</verse>
				<verse number="11">ಅವನು ಈಜಿಪ್ಟನ್ನು ಸಮೀಪಿಸುತ್ತಿದ್ದಾಗ, ತನ್ನ ಹೆಂಡತಿ ಸಾರಯಳಿಗೆ, “ನೀನು ನೋಡುವುದಕ್ಕೆ ರೂಪವತಿಯೆಂದು ನನಗೆ ತಿಳಿದಿದೆ.</verse>
				<verse number="12">ಹೀಗಿರುವುದರಿಂದ ಈಜಿಪ್ಟಿನವರು ನಿನ್ನನ್ನು ಕಂಡು, ‘ಈಕೆಯು ಅವನ ಹೆಂಡತಿ’ ಎಂದು ಹೇಳಿ, ನನ್ನನ್ನು ಕೊಂದುಹಾಕಿ, ನಿನ್ನನ್ನು ಉಳಿಸುವರು.</verse>
				<verse number="13">ನಿನ್ನ ದೆಸೆಯಿಂದ ನನಗೆ ಒಳ್ಳೆಯದಾಗಿ, ನನ್ನ ಪ್ರಾಣವು ಉಳಿಯುವಂತೆ ನೀನು ನನ್ನ ಸಹೋದರಿ ಎಂದು ದಯಮಾಡಿ ಹೇಳಬೇಕು,” ಎಂದು ಹೇಳಿದನು.</verse>
				<verse number="14">ಅಬ್ರಾಮನು ಈಜಿಪ್ಟಿಗೆ ಬಂದಾಗ, ಈಜಿಪ್ಟಿನವರು, ಆ ಸಾರಯಳು ಬಹಳ ಸುಂದರಿ ಎಂದುಕೊಂಡರು.</verse>
				<verse number="15">ಫರೋಹನ ಅಧಿಕಾರಿಗಳು ಆಕೆಯನ್ನು ನೋಡಿ, ಫರೋಹನ ಮುಂದೆ ಆಕೆಯನ್ನು ಹೊಗಳಿ, ಆ ಸ್ತ್ರೀಯನ್ನು ಅವನ ಅರಮನೆಗೆ ಕರೆದುಕೊಂಡು ಹೋದರು.</verse>
				<verse number="16">ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೆಯದನ್ನು ಮಾಡಿದನು. ಅವನಿಗೆ ಕುರಿ, ಎತ್ತು, ಕತ್ತೆಗಳೂ ದಾಸದಾಸಿಯರೂ ಹೆಣ್ಣು ಕತ್ತೆಗಳೂ ಒಂಟೆಗಳೂ ದೊರೆತವು.</verse>
				<verse number="17">ಆದರೆ ಯೆಹೋವ ದೇವರು ಫರೋಹನನ್ನೂ, ಅವನ ಮನೆಯನ್ನೂ ಅಬ್ರಾಮನ ಹೆಂಡತಿ ಸಾರಯಳಿಗಾಗಿ ಭಯಂಕರವಾದ ರೋಗಗಳಿಂದ ಬಾಧಿಸಿದರು.</verse>
				<verse number="18">ಅನಂತರ ಫರೋಹನು ಅಬ್ರಾಮನನ್ನು ಕರೆಯಿಸಿ, “ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿ ಎಂದು ಯಾಕೆ ನನಗೆ ತಿಳಿಸಲಿಲ್ಲ?</verse>
				<verse number="19">‘ಆಕೆಯು ನನ್ನ ಸಹೋದರಿ,’ ಎಂದು ಯಾಕೆ ಹೇಳಿದೆ? ನೀನು ಹಾಗೆ ಹೇಳಿದ್ದರಿಂದ ಆಕೆಯನ್ನು ನನಗೆ ಹೆಂಡತಿಯಾಗಿ ಇಟ್ಟುಕೊಳ್ಳುವುದರಲ್ಲಿದ್ದೆನು. ಆದರೆ ಈಗ, ನಿನ್ನ ಹೆಂಡತಿ, ಈಕೆಯನ್ನು ನೀನು ಕರೆದುಕೊಂಡು ಹೋಗು,” ಎಂದನು.</verse>
				<verse number="20">ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಆಜ್ಞಾಪಿಸಲು, ಅವರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗಿದ್ದ ಎಲ್ಲದರ ಸಮೇತ ಅಲ್ಲಿಂದ ಕಳುಹಿಸಿಬಿಟ್ಟನು.</verse>
			</chapter>
			<chapter number="13">
				<verse number="1">ಆಗ ಅಬ್ರಾಮನು ತನ್ನ ಹೆಂಡತಿಯೊಂದಿಗೆ ತನಗೆ ಇದ್ದದ್ದನ್ನೆಲ್ಲಾ ತೆಗೆದುಕೊಂಡು ಲೋಟನ ಸಂಗಡ ಈಜಿಪ್ಟನ್ನು ಬಿಟ್ಟು ನೆಗೆವಕ್ಕೆ ಪ್ರಯಾಣಮಾಡಿದನು.</verse>
				<verse number="2">ಅಬ್ರಾಮನು ಪಶುಗಳು, ಬೆಳ್ಳಿ ಮತ್ತು ಬಂಗಾರವನ್ನು ಹೊಂದಿ ಬಹು ಧನವಂತನಾಗಿದ್ದನು.</verse>
				<verse number="3">ಅವನು ತನ್ನ ಪ್ರಯಾಣಗಳಲ್ಲಿ ನೆಗೆವದಿಂದ ಬೇತೇಲಿಗೆ, ಎಂದರೆ ಮೊದಲು ಬೇತೇಲಿಗೂ ಆಯಿ ಎಂಬ ಊರಿಗೂ ಮಧ್ಯದಲ್ಲಿ ಅವನ ಗುಡಾರವಿದ್ದ ಸ್ಥಳಕ್ಕೆ ಬಂದನು.</verse>
				<verse number="4">ಅಲ್ಲಿ ಅಬ್ರಾಮನು ಯೆಹೋವ ದೇವರ ಹೆಸರನ್ನು ಹೇಳಿಕೊಂಡು ಆರಾಧಿಸಿದನು.</verse>
				<verse number="5">ಅಬ್ರಾಮನ ಸಂಗಡ ಬಂದ ಲೋಟನಿಗೆ ಸಹ ಕುರಿ ದನಗಳೂ ಗುಡಾರಗಳೂ ಇದ್ದವು.</verse>
				<verse number="6">ಆಗ ಅವರು ಒಂದಾಗಿ ವಾಸಿಸಲಿಕ್ಕೆ ಆ ಸ್ಥಳ ಸಾಲದೆ ಹೋಯಿತು. ಅವರಿಬ್ಬರ ಸಂಪತ್ತು ಬಹಳವಾಗಿದ್ದರಿಂದ ಒಂದೇ ಸ್ಥಳದಲ್ಲಿ ಅವರು ವಾಸವಾಗಿರಲು ಆಗಲಿಲ್ಲ.</verse>
				<verse number="7">ಆಗ ಅಬ್ರಾಮನ ದನ ಕಾಯುವವರಿಗೂ ಲೋಟನ ದನ ಕಾಯುವವರಿಗೂ ಜಗಳವಾಯಿತು. ಕಾನಾನ್ಯರೂ ಪೆರಿಜೀಯರೂ ಆಗ ದೇಶದಲ್ಲಿ ವಾಸವಾಗಿದ್ದರು.</verse>
				<verse number="8">ಅಬ್ರಾಮನು ಲೋಟನಿಗೆ, “ನನಗೂ, ನಿನಗೂ; ನನ್ನ ದನ ಕಾಯುವವರಿಗೂ ನಿನ್ನ ದನ ಕಾಯುವವರಿಗೂ ಜಗಳವಿರಬಾರದು. ಏಕೆಂದರೆ ನಾವು ಬಳಗದವರು.</verse>
				<verse number="9">ದೇಶವೆಲ್ಲಾ ನಿನ್ನ ಮುಂದೆ ಇರುತ್ತದೆಯಲ್ಲವೆ? ನಾವು ಪ್ರತ್ಯೇಕವಾಗೋಣ. ನೀನು ಎಡಕ್ಕೆ ಹೋದರೆ, ನಾನು ಬಲಕ್ಕೆ ಹೋಗುವೆನು; ನೀನು ಬಲಕ್ಕೆ ಹೋದರೆ, ನಾನು ಎಡಕ್ಕೆ ಹೋಗುವೆನು,” ಎಂದನು.</verse>
				<verse number="10">ಲೋಟನು ತನ್ನ ಕಣ್ಣುಗಳನ್ನೆತ್ತಿ ನೋಡಿ ಯೊರ್ದನಿನ ಮೈದಾನವನ್ನೆಲ್ಲಾ ಕಂಡನು. ಏಕೆಂದರೆ ಯೆಹೋವ ದೇವರು ಸೊದೋಮನ್ನೂ ಗೊಮೋರವನ್ನೂ ನಾಶ ಮಾಡುವುದಕ್ಕಿಂತ ಮುಂಚೆ, ಅದೆಲ್ಲಾ ಚೋಗರಿನವರೆಗೆ ನೀರಾವರಿ ಪ್ರದೇಶವಾಗಿದ್ದು, ಯೆಹೋವ ದೇವರ ತೋಟದಂತೆಯೂ ಈಜಿಪ್ಟ್ ದೇಶದಂತೆಯೂ ಇತ್ತು.</verse>
				<verse number="11">ಆದುದರಿಂದ ಲೋಟನು ಯೊರ್ದನಿನ ಕಣಿವೆಯನ್ನೆಲ್ಲಾ ತನಗಾಗಿ ಆರಿಸಿಕೊಂಡನು. ಲೋಟನು ಪೂರ್ವದಿಕ್ಕಿನ ಕಡೆಗೆ ಹೊರಟಿದ್ದರಿಂದ, ಅವರು ಒಬ್ಬರಿಂದೊಬ್ಬರು ಪ್ರತ್ಯೇಕವಾದರು.</verse>
				<verse number="12">ಅಬ್ರಾಮನು ಕಾನಾನ್ ದೇಶದಲ್ಲಿ ವಾಸಮಾಡಿದನು. ಲೋಟನಾದರೋ ಸಮತಟ್ಟಾದ ಊರುಗಳಲ್ಲಿ ವಾಸಿಸುತ್ತಾ ಸೊದೋಮಿನ ಬಳಿ ತನ್ನ ಗುಡಾರವನ್ನು ಹಾಕಿದನು.</verse>
				<verse number="13">ಸೊದೋಮಿನ ಜನರು ದುಷ್ಟರಾಗಿದ್ದರು ಮತ್ತು ಯೆಹೋವ ದೇವರ ವಿರುದ್ಧ ಬಹಳ ಪಾಪಮಾಡುತ್ತಿದ್ದರು.</verse>
				<verse number="14">ಲೋಟನು ಅಬ್ರಾಮನಿಂದ ಹೋದ ಮೇಲೆ ಯೆಹೋವ ದೇವರು ಅವನಿಗೆ, “ಈಗ ನೀನಿರುವ ಸ್ಥಳದಿಂದ ಉತ್ತರಕ್ಕೂ ದಕ್ಷಿಣಕ್ಕೂ ಪೂರ್ವಕ್ಕೂ ಪಶ್ಚಿಮಕ್ಕೂ ಕಣ್ಣೆತ್ತಿ ನೋಡು.</verse>
				<verse number="15">ಏಕೆಂದರೆ ನೀನು ಕಾಣುವ ದೇಶವನ್ನೆಲ್ಲಾ ನಾನು ನಿನಗೂ ನಿನ್ನ ಸಂತತಿಗೂ ಶಾಶ್ವತವಾಗಿ ಕೊಡುವೆನು.</verse>
				<verse number="16">ಭೂಮಿಯ ಧೂಳನ್ನು ಒಬ್ಬನು ಲೆಕ್ಕಿಸಬಹುದಾದರೆ, ನಿನ್ನ ಸಂತಾನದವರನ್ನು ಸಹ ಲೆಕ್ಕಿಸಲು ಸಾಧ್ಯವಾಗುವುದು.</verse>
				<verse number="17">ಎದ್ದು ದೇಶದ ಉದ್ದಗಲಕ್ಕೂ ನಡೆದಾಡು. ನಾನು ನಿನಗೆ ಅದನ್ನು ಕೊಡುವೆನು,” ಎಂದರು.</verse>
				<verse number="18">ಅನಂತರ ಅಬ್ರಾಮನು ತನ್ನ ಗುಡಾರವನ್ನು ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆಯ ತೋಪಿಗೆ ಬಂದು, ಅಲ್ಲಿ ವಾಸವಾಗಿದ್ದನು. ಅಲ್ಲಿ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿದನು.</verse>
			</chapter>
			<chapter number="14">
				<verse number="1">ಶಿನಾರಿನ ಅರಸ ಅಮ್ರಾಫೆಲನು ಎಲ್ಲಸಾರಿನ ಅರಸ ಅರಿಯೋಕನು, ಏಲಾಮಿನ ಅರಸ ಕೆದೊರ್ಲಗೋಮರನು, ಗೋಯಿಮದ ಅರಸ ತಿದ್ಗಾಲನು ಇವರ ದಿನಗಳಲ್ಲಿ ಆದದ್ದೇನೆಂದರೆ:</verse>
				<verse number="2">ಇವರು ಸೊದೋಮಿನ ಅರಸ ಬೆರಗನೂ ಗೊಮೋರದ ಅರಸ ಬಿರ್ಶಗನೂ ಅದ್ಮಾಹದ ಅರಸ ಶಿನಾಬನಿಗೂ ಚೆಬೋಯಿಮಿನ ಅರಸ ಶೆಮೇಬರನಿಗೂ ಬೆಲಗಿನ ಅಂದರೆ, ಚೋಗರದ ಅರಸನಿಗೂ ವಿರೋಧವಾಗಿ ಯುದ್ಧಮಾಡಿದರು.</verse>
				<verse number="3">ಇವರೆಲ್ಲರು ಉಪ್ಪಿನ ಸಮುದ್ರವಾಗಿರುವ ಸಿದ್ದೀಮ್ ತಗ್ಗಿನಲ್ಲಿ ಒಟ್ಟಾಗಿ ಕೂಡಿಬಂದರು.</verse>
				<verse number="4">ಅವರು ಹನ್ನೆರಡು ವರ್ಷ ಕೆದೊರ್ಲಗೋಮರನಿಗೆ ಸೇವೆಮಾಡಿ, ಹದಿಮೂರನೆಯ ವರ್ಷದಲ್ಲಿ ತಿರುಗಿಬಿದ್ದರು.</verse>
				<verse number="5">ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಅವನ ಸಂಗಡ ಇದ್ದ ಅರಸರೂ ಬಂದು ಅಷ್ಟರೋತ್ ಕರ್ನಯಿಮಿನಲ್ಲಿ ರೆಫಾಯರನ್ನೂ, ಹಾಮಿನಲ್ಲಿ ಜೂಜ್ಯರನ್ನೂ, ಶಾವೆ ಕಿರ್ಯಾತಯಿಮಿನಲ್ಲಿ ಏಮಿಯರನ್ನೂ,</verse>
				<verse number="6">ಅವರ ಬೆಟ್ಟವಾದ ಸೇಯೀರನಲ್ಲಿ ಹೋರಿಯರನ್ನೂ ಅರಣ್ಯಕ್ಕೆ ಸಮೀಪವಾದ ಏಲ್ಪಾರಾನಿನವರೆಗೂ ಅವರನ್ನು ಸೋಲಿಸಿದರು.</verse>
				<verse number="7">ಅವರು ಹಿಂದಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು, ಅಮಾಲೇಕ್ಯರ ಎಲ್ಲಾ ಬಯಲನ್ನು ಹಜಜೋನ್ ತಾಮಾರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಜಯಿಸಿದರು.</verse>
				<verse number="8">ಸೊದೋಮಿನ ಅರಸನೂ ಗೊಮೋರದ ಅರಸನೂ ಅದ್ಮಾಹದ ಅರಸನೂ ಚೆಬೋಯಿಮಿನ ಅರಸನೂ ಚೋಗರೆಂಬ ಬೆಲಗದ ಅರಸನೂ ಹೊರಟು,</verse>
				<verse number="9">ಏಲಾಮಿನ ಅರಸ ಕೆದೊರ್ಲಗೋಮರನಿಗೂ ಗೋಯಿಮದ ಅರಸನಾದ ತಿದ್ಗಾಲನಿಗೂ ಶಿನಾರಿನ ಅರಸ ಅಮ್ರಾಫೆಲನಿಗೂ ಎಲ್ಲಸಾರಿನ ಅರಸ ಅರಿಯೋಕನಿಗೂ ವಿರೋಧವಾಗಿ ಸಿದ್ದೀಮ್ ತಗ್ಗಿನಲ್ಲಿ ಯುದ್ಧಮಾಡಿದರು. ಹೀಗೆ ನಾಲ್ವರು ಅರಸರಿಗೆ ವಿರೋಧವಾಗಿ ಐದು ಮಂದಿ ಅರಸರು ಎದುರಿಸಿದರು.</verse>
				<verse number="10">ಸಿದ್ದೀಮ್ ತಗ್ಗು ಕಲ್ಲರಗಿನ ಕೆಸರುಕುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ಅರಸರು ಓಡಿಹೋಗಿ ಅದರಲ್ಲಿ ಬಿದ್ದರು. ಉಳಿದವರು ಬೆಟ್ಟಕ್ಕೆ ಓಡಿಹೋದರು.</verse>
				<verse number="11">ಆಗ ಅವರು ಸೊದೋಮ್, ಗೊಮೋರಗಳ ಎಲ್ಲಾ ಸಂಪತ್ತನ್ನೂ, ಅವರ ಎಲ್ಲಾ ಆಹಾರ ಪದಾರ್ಥಗಳನ್ನೂ ತೆಗೆದುಕೊಂಡು ಹೊರಟು ಹೋದರು.</verse>
				<verse number="12">ಸೊದೋಮಿನಲ್ಲಿ ವಾಸವಾಗಿದ್ದ ಅಬ್ರಾಮನ ಸಹೋದರನ ಮಗ ಲೋಟನನ್ನು ಅವನ ಆಸ್ತಿ ಸಹಿತ ಹಿಡಿದುಕೊಂಡು ಹೋದರು.</verse>
				<verse number="13">ತಪ್ಪಿಸಿಕೊಂಡವನೊಬ್ಬನು ಹೋಗಿ ಹಿಬ್ರಿಯನಾದ ಅಬ್ರಾಮನಿಗೆ ಇದನ್ನು ತಿಳಿಸಿದನು. ಆಗ ಅಬ್ರಾಮನು ಎಷ್ಕೋಲನಿಗೂ ಆನೇರನಿಗೂ ಸಹೋದರನಾಗಿದ್ದ ಅಮೋರಿಯನಾದ ಮಮ್ರೆಯನ ತೋಪಿನಲ್ಲಿ ವಾಸವಾಗಿದ್ದನು. ಇವರು ಅಬ್ರಾಮನೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರು.</verse>
				<verse number="14">ತನ್ನ ಸಹೋದರನ ಮಗನು ಸೆರೆಯಾಗಿ ಹೋಗಿರುವುದನ್ನು ಕೇಳಿದಾಗ, ಅಬ್ರಾಮನು ತನ್ನ ಮನೆಯಲ್ಲಿ ಹುಟ್ಟಿ, ಶಿಕ್ಷಿತರಾಗಿದ್ದ ಮುನ್ನೂರ ಹದಿನೆಂಟು ಸೇವಕರನ್ನು ಯುದ್ಧಕ್ಕೆ ಸಿದ್ಧಮಾಡಿ, ದಾನಿನವರೆಗೆ ಹಿಂದಟ್ಟಿದನು.</verse>
				<verse number="15">ಅಬ್ರಾಮನು ರಾತ್ರಿಯಲ್ಲಿ ಅವರಿಗೆ ವಿರೋಧವಾಗಿ ತನ್ನ ಸೇವಕರ ಸೈನ್ಯವನ್ನು ವಿಭಾಗಿಸಿ, ಅವರನ್ನು ಹೊಡೆದು, ದಮಸ್ಕದ ಉತ್ತರದಲ್ಲಿ ಹೋಬಾದವರೆಗೆ ಅವರನ್ನು ಸೋಲಿಸಿದನು.</verse>
				<verse number="16">ಆಸ್ತಿಯನ್ನೆಲ್ಲಾ ಹಿಂದಕ್ಕೆ ತೆಗೆದುಕೊಂಡು ಬಂದನು. ತನ್ನ ಬಂಧುವಾದ ಲೋಟನನ್ನೂ, ಅವನ ಸಂಪತ್ತನ್ನೂ ಸ್ತ್ರೀಯರನ್ನೂ ಜನರನ್ನೂ ಹಿಂದಕ್ಕೆ ತೆಗೆದುಕೊಂಡು ಬಂದನು.</verse>
				<verse number="17">ಅವನು ಕೆದೊರ್ಲಗೋಮರನನ್ನೂ, ಅವನ ಸಂಗಡ ಇದ್ದ ರಾಜರನ್ನೂ ಸೋಲಿಸಿ, ಹಿಂದಿರುಗಿ ಬಂದಾಗ, ಸೊದೋಮಿನ ಅರಸನು ಹೊರಟು ಶಾವೆ ತಗ್ಗು ಎಂಬ ಅರಸನ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಳ್ಳುವುದಕ್ಕಾಗಿ ಬಂದನು.</verse>
				<verse number="18">ಸಾಲೇಮಿನ ಅರಸ ಮೆಲ್ಕಿಜೆದೇಕನು ರೊಟ್ಟಿ ಮತ್ತು ದ್ರಾಕ್ಷಾರಸವನ್ನು ತಂದನು. ಇವನು ಮಹೋನ್ನತರಾದ ದೇವರ ಯಾಜಕನೂ ಆಗಿದ್ದನು.</verse>
				<verse number="19">ಇವನು ಅಬ್ರಾಮನನ್ನು ಹೀಗೆ ಆಶೀರ್ವದಿಸಿದನು: “ಅಬ್ರಾಮನು ಭೂಮಿ, ಆಕಾಶವನ್ನು ಸೃಷ್ಟಿಸಿದ ಮಹೋನ್ನತ ದೇವರಿಂದ ಆಶೀರ್ವಾದ ಹೊಂದಲಿ.</verse>
				<verse number="20">ನಿನ್ನ ಶತ್ರುಗಳನ್ನು ನಿನ್ನ ಕೈಗೆ ಒಪ್ಪಿಸಿದ ಮಹೋನ್ನತ ದೇವರು ಸ್ತುತಿಹೊಂದಲಿ.” ಅಬ್ರಾಮನು ಎಲ್ಲವುಗಳಲ್ಲಿ ಅವನಿಗೆ ಹತ್ತನೆಯ ಒಂದು ಭಾಗವನ್ನು ಕೊಟ್ಟನು.</verse>
				<verse number="21">ಸೊದೋಮಿನ ಅರಸನು ಅಬ್ರಾಮನಿಗೆ, “ನೀನು ಬಿಡಿಸಿಕೊಂಡು ಬಂದ ಜನರನ್ನು ನನಗೆ ಕೊಡು. ಸಂಪತ್ತನ್ನು ನೀನು ತೆಗೆದುಕೋ,” ಎಂದನು.</verse>
				<verse number="22">ಅದಕ್ಕೆ ಅಬ್ರಾಮನು ಸೊದೋಮಿನ ಅರಸನಿಗೆ, “ಭೂಮಿ ಆಕಾಶವನ್ನು ಸ್ವಾಧೀನ ಪಡಿಸಿಕೊಂಡಿರುವ ಮಹೋನ್ನತ ದೇವರಾಗಿರುವ ಯೆಹೋವ ದೇವರ ಕಡೆಗೆ ನನ್ನ ಕೈ ಎತ್ತಿ ಪ್ರಮಾಣ ಮಾಡುತ್ತೇನೆ.</verse>
				<verse number="23">ನಿನಗೆ ಸೇರಿದ ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಾನು ತೆಗೆದುಕೊಳ್ಳುವುದಿಲ್ಲ. ಏಕೆಂದರೆ, ‘ನಾನು ಅಬ್ರಾಮನನ್ನು ಐಶ್ವರ್ಯವಂತನನ್ನಾಗಿ ಮಾಡಿದ್ದೇನೆ’ ಎಂದು ನೀನು ಹೇಳಬಾರದು.</verse>
				<verse number="24">ನನ್ನ ಆಳುಗಳು ಊಟಮಾಡಿದ್ದು ಸಾಕು. ನನ್ನ ಸಂಗಡ ಬಂದ ಆನೇರ, ಎಷ್ಕೋಲ್ ಮತ್ತು ಮಮ್ರೆ ಎಂಬ ಈ ಜನರ ಪಾಲನ್ನು ಬಿಟ್ಟು ನಾನು ಏನನ್ನೂ ತೆಗೆದುಕೊಳ್ಳುವುದಿಲ್ಲ. ಇವರು ತಮ್ಮ ಪಾಲನ್ನು ತೆಗೆದುಕೊಳ್ಳಲಿ,” ಎಂದನು.</verse>
			</chapter>
			<chapter number="15">
				<verse number="1">ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ: “ಅಬ್ರಾಮನೇ, ಭಯಪಡಬೇಡ. ನಾನು ನಿನಗೆ ಗುರಾಣಿಯಾಗಿದ್ದೇನೆ. ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ.”</verse>
				<verse number="2">ಅದಕ್ಕೆ ಅಬ್ರಾಮನು, “ಸಾರ್ವಭೌಮ ಯೆಹೋವ ದೇವರೇ, ಮಕ್ಕಳಿಲ್ಲದವನಾಗಿರುವ ನನಗೆ ಏನು ಕೊಡುವಿರಿ? ಈ ದಮಸ್ಕದ ಎಲೀಯೆಜೆರನಿಗೆ ನನ್ನ ಆಸ್ತಿ ಪಾಲಾಗಿಬಿಡುವುದು,” ಎಂದನು.</verse>
				<verse number="3">ಅನಂತರ ಅಬ್ರಾಮನು, “ನೀವು ನನಗೆ ಸಂತಾನವನ್ನು ಕೊಡಲಿಲ್ಲ. ನನ್ನ ಮನೆಯಲ್ಲಿರುವ ದಾಸನೇ ಉತ್ತರಾಧಿಕಾರಿಯಾಗಿರುವನು,” ಎಂದನು.</verse>
				<verse number="4">ಆಗ ಯೆಹೋವ ದೇವರ ವಾಕ್ಯವು, “ಈ ಮನುಷ್ಯನು ನಿನ್ನ ಉತ್ತರಾಧಿಕಾರಿಯಾಗುವುದಿಲ್ಲ. ನಿನ್ನಿಂದಲೇ ಹುಟ್ಟಿಬರುವ ನಿನ್ನ ಮಗನು ನಿನ್ನ ವಾರಸುದಾರನಾಗುವನು,” ಎಂದು ಹೇಳಿ,</verse>
				<verse number="5">ಯೆಹೋವ ದೇವರು ಅವನನ್ನು ಹೊರಗೆ ಕರೆದುಕೊಂಡು ಬಂದು, “ಈಗ ನೀನು ಆಕಾಶವನ್ನು ದೃಷ್ಟಿಸಿ, ನಕ್ಷತ್ರಗಳನ್ನು ಲೆಕ್ಕಿಸಲು ನಿನ್ನಿಂದಾದರೆ, ಲೆಕ್ಕಿಸು. ಅದರಂತೆಯೇ ನಿನ್ನ ಸಂತತಿಯು ಆಗುವುದು,” ಎಂದು ಹೇಳಿದರು.</verse>
				<verse number="6">ಅಬ್ರಾಮನು ಯೆಹೋವ ದೇವರನ್ನು ನಂಬಿದನು, ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು.</verse>
				<verse number="7">ದೇವರು ಅವನಿಗೆ, “ಈ ದೇಶವನ್ನು ಸೊತ್ತಾಗಿ ನಿನಗೆ ಕೊಡಲು, ಕಸ್ದೀಯರ ಊರ್ ಎಂಬ ಪ್ರದೇಶದಿಂದ ನಿನ್ನನ್ನು ಹೊರಗೆ ತಂದ ಯೆಹೋವ ದೇವರು ನಾನೇ,” ಎಂದು ಹೇಳಿದರು.</verse>
				<verse number="8">ಅದಕ್ಕೆ ಅವನು, “ಸಾರ್ವಭೌಮ ಯೆಹೋವ ದೇವರೇ ನಾನು ಅದನ್ನು ನನ್ನ ಸೊತ್ತಾಗಿ ಹೊಂದುವೆನೆಂದು ಯಾವುದರಿಂದ ತಿಳಿದುಕೊಳ್ಳಲಿ?” ಎಂದನು.</verse>
				<verse number="9">ಅದಕ್ಕೆ ಯೆಹೋವ ದೇವರು ಅಬ್ರಾಮನಿಗೆ, “ಮೂರು ವರ್ಷದ ಕಡಸನ್ನು, ಮೂರು ವರ್ಷದ ಮೇಕೆಯನ್ನು, ಮೂರು ವರ್ಷದ ಟಗರನ್ನು, ಒಂದು ಬೆಳವಕ್ಕಿಯನ್ನು, ಒಂದು ಪಾರಿವಾಳವನ್ನು ನನಗಾಗಿ ತೆಗೆದುಕೊಂಡು ಬಾ,” ಎಂದರು.</verse>
				<verse number="10">ಅನಂತರ ಅವನು ಇವುಗಳನ್ನೆಲ್ಲಾ ಯೆಹೋವ ದೇವರಿಗಾಗಿ ತೆಗೆದುಕೊಂಡು ಬಂದು ಎರಡೆರಡು ಹೋಳುಮಾಡಿ, ಒಂದು ತುಂಡನ್ನು ಇನ್ನೊಂದರ ಎದುರಾಗಿ ಇಟ್ಟನು. ಆದರೆ ಅವನು ಪಕ್ಷಿಗಳನ್ನು ತುಂಡು ಮಾಡಲಿಲ್ಲ.</verse>
				<verse number="11">ರಣಹದ್ದುಗಳು ಆ ಶವಗಳ ಮೇಲೆ ಇಳಿದು ಬಂದಾಗ, ಅಬ್ರಾಮನು ಅವುಗಳನ್ನು ಓಡಿಸಿದನು.</verse>
				<verse number="12">ಸೂರ್ಯನು ಅಸ್ತಮಿಸಲಾಗಿ ಅಬ್ರಾಮನಿಗೆ ಗಾಢನಿದ್ರೆ ಹತ್ತಿತ್ತು. ಭೀಕರವಾದ ಕಾರ್ಗತ್ತಲು ಅವನ ಮೇಲೆ ಕವಿಯಿತು.</verse>
				<verse number="13">ಯೆಹೋವ ದೇವರು ಅಬ್ರಾಮನಿಗೆ, “ನಿನ್ನ ಸಂತತಿಯವರು ತಮ್ಮದಲ್ಲದ ದೇಶದಲ್ಲಿ ಪ್ರವಾಸಿಗಳಾಗಿರುವರು, ಅವರು ಗುಲಾಮರಾಗಿ ನಾಲ್ಕುನೂರು ವರ್ಷಗಳವರೆಗೆ ದಬ್ಬಾಳಿಕೆಗೆ ಗುರಿಯಾಗುವರು ಎಂಬುದನ್ನು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು.</verse>
				<verse number="14">ಆದರೆ ಅವರು ಗುಲಾಮರಾಗಿ ಸೇವೆ ಸಲ್ಲಿಸುತ್ತಿದ್ದ ದೇಶಕ್ಕೆ ನಾನು ನ್ಯಾಯತೀರಿಸುವೆನು. ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು.</verse>
				<verse number="15">ನೀನಾದರೋ ಸಮಾಧಾನದಿಂದ ನಿನ್ನ ಪಿತೃಗಳ ಬಳಿಗೆ ಸೇರುವೆ. ಬಹಳ ಮುದಿ ಪ್ರಾಯದವನಾಗಿ ಮರಣಹೊಂದುವೆ.</verse>
				<verse number="16">ಆಗ ನಾಲ್ಕನೆಯ ಸಂತಾನದವರು ಇಲ್ಲಿಗೆ ತಿರುಗಿ ಬರುವರು. ಏಕೆಂದರೆ ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ,” ಎಂದು ಹೇಳಿದರು.</verse>
				<verse number="17">ಇದಾದ ಮೇಲೆ ಹೊತ್ತು ಮುಳುಗಿ ಕತ್ತಲಾಗುತ್ತಿರಲು, ಹೊಗೆ ಹಾಯುವ ಒಲೆಯೂ ಉರಿಯುವ ದೀಪವೂ ಆ ತುಂಡುಗಳ ಮಧ್ಯದಲ್ಲಿ ಹಾದು ಹೋದವು.</verse>
				<verse number="18">ಅದೇ ದಿನದಲ್ಲಿ ಯೆಹೋವ ದೇವರು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಈಜಿಪ್ಟ್ ದೇಶದ ನದಿಯಿಂದ ಮಹಾನದಿ ಯೂಫ್ರೇಟೀಸ್ ನದಿಯವರೆಗೆ ವಾಸಿಸುವ</verse>
				<verse number="19">ಕೇನ್ಯರೂ ಕೆನಿಜ್ಜೀಯರೂ ಕದ್ಮೋನಿಯರೂ</verse>
				<verse number="20">ಹಿತ್ತಿಯರೂ ಪೆರಿಜೀಯರೂ ರೆಫಾಯರೂ</verse>
				<verse number="21">ಅಮೋರಿಯರೂ ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ,” ಎಂದು ಹೇಳಿದರು.</verse>
			</chapter>
			<chapter number="16">
				<verse number="1">ಅಬ್ರಾಮನ ಹೆಂಡತಿ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಹಾಗರಳೆಂಬ ಈಜಿಪ್ಟಿನ ದಾಸಿ ಇದ್ದಳು.</verse>
				<verse number="2">ಆಗ ಸಾರಯಳು ಅಬ್ರಾಮನಿಗೆ, “ನಾನು ಮಕ್ಕಳನ್ನು ಹೆರದಂತೆ ಯೆಹೋವ ದೇವರು ನನಗೆ ಅಡ್ಡಿ ಮಾಡಿದ್ದಾರೆ. ದಯಮಾಡಿ ನೀನು ನನ್ನ ದಾಸಿಯ ಬಳಿಗೆ ಹೋಗು. ಒಂದು ವೇಳೆ ನಾನು ಅವಳ ಮೂಲಕ ಕುಟುಂಬವನ್ನು ಕಟ್ಟಬಲ್ಲೆ,” ಎಂದಳು. ಅಬ್ರಾಮನು ಸಾರಯಳ ಮಾತನ್ನು ಕೇಳಿದನು.</verse>
				<verse number="3">ಅಬ್ರಾಮನು ಕಾನಾನ್ ದೇಶದಲ್ಲಿ ಹತ್ತು ವರ್ಷ ವಾಸಿಸಿದ ತರುವಾಯ, ಅಬ್ರಾಮನ ಹೆಂಡತಿಯಾದ ಸಾರಯಳು ಈಜಿಪ್ಟಿನವಳಾದ ಹಾಗರಳೆಂಬ ದಾಸಿಯನ್ನು ತನ್ನ ಗಂಡನಿಗೆ ಹೆಂಡತಿಯಾಗಿ ಒಪ್ಪಿಸಿದಳು.</verse>
				<verse number="4">ಅವನು ಹಾಗರಳನ್ನು ಕೂಡಿದನು. ಆಗ ಅವಳು ಗರ್ಭಿಣಿಯಾದಳು. ತಾನು ಗರ್ಭಿಣಿಯಾದೆನೆಂದು ತಿಳಿದಾಗ, ಅವಳು ತನ್ನ ಯಜಮಾನಿಯನ್ನು ತಿರಸ್ಕರಿಸಿದಳು.</verse>
				<verse number="5">ಸಾರಯಳು ಅಬ್ರಾಮನಿಗೆ, “ನನಗೆ ಆದ ಅನ್ಯಾಯಕ್ಕೆ ನೀನೇ ಹೊಣೆ. ನಾನು ನನ್ನ ದಾಸಿಯನ್ನು ನಿನಗೆ ಹೆಂಡತಿಯಾಗಿ ಕೊಟ್ಟೆನು. ಈಗ ಅವಳು ಗರ್ಭಿಣಿಯಾದ್ದರಿಂದ ನಾನು ಅವಳ ಕಣ್ಣಿಗೆ ತಿರಸ್ಕಾರಕ್ಕೆ ಯೋಗ್ಯಳಾದೆನು. ಯೆಹೋವ ದೇವರು ನಿನಗೂ ನನಗೂ ನ್ಯಾಯತೀರಿಸಲಿ,” ಎಂದಳು.</verse>
				<verse number="6">ಆದರೆ ಅಬ್ರಾಮನು ಸಾರಯಳಿಗೆ, “ಇಗೋ, ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ. ನಿನ್ನ ಮನಸ್ಸಿಗೆ ಬಂದಂತೆ ಮಾಡು,” ಎಂದನು. ಆಗ ಸಾರಯಳು ಹಾಗರಳನ್ನು ಬಾಧಿಸಿದ್ದರಿಂದ, ಅವಳು ಸಾರಯಳಿಂದ ಓಡಿ ಹೋದಳು.</verse>
				<verse number="7">ಯೆಹೋವ ದೇವರ ದೂತನು ಮರುಭೂಮಿಯಲ್ಲಿ ಶೂರಿನ ಮಾರ್ಗವಾಗಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಹಾಗರಳನ್ನು ಕಂಡು,</verse>
				<verse number="8">“ಸಾರಯಳ ದಾಸಿ ಹಾಗರಳೇ, ನೀನು ಎಲ್ಲಿಂದ ಬಂದೆ? ನೀನು ಎಲ್ಲಿಗೆ ಹೋಗುತ್ತೀ?” ಎಂದು ವಿಚಾರಿಸಿದನು. ಅವಳು, “ನನ್ನ ಯಜಮಾನಿ ಸಾರಯಳನ್ನು ಬಿಟ್ಟು ಓಡಿ ಹೋಗುತ್ತಿದ್ದೇನೆ,” ಎಂದಳು.</verse>
				<verse number="9">ಯೆಹೋವ ದೇವರ ದೂತನು ಆಕೆಗೆ, “ನಿನ್ನ ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಆಕೆಗೆ ಅಧೀನಳಾಗಿರು,” ಎಂದನು.</verse>
				<verse number="10">ಇದಲ್ಲದೆ ಯೆಹೋವ ದೇವರ ದೂತನು ಅವಳಿಗೆ, “ನಿನ್ನ ಸಂತಾನವನ್ನು ಲೆಕ್ಕಿಸಲಾಗದಷ್ಟು ಹೆಚ್ಚಿಸುತ್ತೇನೆ,” ಎಂದನು.</verse>
				<verse number="11">ಅನಂತರ ಯೆಹೋವ ದೇವರ ದೂತನು ಆಕೆಗೆ ಹೀಗೆ ಹೇಳಿದನು: “ನೀನು ಈಗ ಗರ್ಭಿಣಿಯಾಗಿರುವೆ, ಒಬ್ಬ ಮಗನನ್ನು ಹೆರುವೆ. ಅವನಿಗೆ, ಇಷ್ಮಾಯೇಲ್ ಎಂದು ಹೆಸರಿಡಬೇಕು. ಏಕೆಂದರೆ ಯೆಹೋವ ದೇವರು ನಿನ್ನ ವ್ಯಥೆಗೆ ಕಿವಿಗೊಟ್ಟಿದ್ದಾರೆ.</verse>
				<verse number="12">ಅವನು ಕಾಡುಕತ್ತೆಯಂತೆ ಇರುವನು. ಪ್ರತಿಯೊಬ್ಬರಿಗೂ ವಿರೋಧವಾಗಿ ಅವನು ಕೈ ಎತ್ತುವನು, ಪ್ರತಿಯೊಬ್ಬರ ಕೈಯೂ ಅವನ ವಿರೋಧವಾಗಿ ಇರುವುದು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿ ವಾಸವಾಗಿರುವನು.”</verse>
				<verse number="13">ಆಮೇಲೆ ಆಕೆಯು ತನ್ನ ಸಂಗಡ ಮಾತನಾಡಿದ ಯೆಹೋವ ದೇವರಿಗೆ, “ನೀವು ನನ್ನನ್ನು ನೋಡುವ ದೇವರು,” ಎಂದು ಹೆಸರಿಟ್ಟಳು. ಏಕೆಂದರೆ, “ನನ್ನನ್ನು ನೋಡುವ ದೇವರನ್ನು ನಾನು ಇಲ್ಲಿ ನೋಡಿದೆ,” ಎಂದುಕೊಂಡಳು.</verse>
				<verse number="14">ಆದ್ದರಿಂದ ಆ ಬಾವಿಗೆ, ಬೇರ್ ಲಹೈರೋಯಿ ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.</verse>
				<verse number="15">ತರುವಾಯ ಹಾಗರಳು ಅಬ್ರಾಮನಿಗೆ ಮಗನನ್ನು ಹೆತ್ತಳು. ಹಾಗರಳ ಮಗನಿಗೆ ಅಬ್ರಾಮನು ಇಷ್ಮಾಯೇಲ್ ಎಂದು ಹೆಸರಿಟ್ಟನು.</verse>
				<verse number="16">ಹಾಗರಳು ಅಬ್ರಾಮನಿಗೆ ಇಷ್ಮಾಯೇಲನನ್ನು ಹೆತ್ತಾಗ, ಅಬ್ರಾಮನು ಎಂಬತ್ತಾರು ವರ್ಷದವನಾಗಿದ್ದನು.</verse>
			</chapter>
			<chapter number="17">
				<verse number="1">ಅಬ್ರಾಮನು ತೊಂಬತ್ತೊಂಬತ್ತು ವರ್ಷದವನಾದಾಗ, ಯೆಹೋವ ದೇವರು ಅಬ್ರಾಮನಿಗೆ ಕಾಣಿಸಿಕೊಂಡು, “ನಾನೇ ಸರ್ವಶಕ್ತ ದೇವರು. ನೀನು ನನ್ನ ಸನ್ನಿಧಿಯಲ್ಲಿಯೇ ನಡೆಯುತ್ತಾ ದೋಷವಿಲ್ಲದವನಾಗಿರು.</verse>
				<verse number="2">ನನಗೂ ನಿನಗೂ ಮಧ್ಯದಲ್ಲಿ ನನ್ನ ಒಡಂಬಡಿಕೆಯನ್ನು ಮಾಡುವೆನು. ಇದಲ್ಲದೆ ನಿನ್ನನ್ನು ಅತ್ಯಧಿಕವಾಗಿ ವೃದ್ಧಿಪಡಿಸುವೆನು,” ಎಂದು ಅವನಿಗೆ ಹೇಳಿದರು.</verse>
				<verse number="3">ಆಗ ಅಬ್ರಾಮನು ಸಾಷ್ಟಾಂಗ ನಮಸ್ಕಾರಮಾಡಿದನು. ದೇವರು ಅವನ ಸಂಗಡ ಮಾತನಾಡಿದ್ದೇನೆಂದರೆ:</verse>
				<verse number="4">“ನಾನಾದರೋ ಈ ನನ್ನ ಒಡಂಬಡಿಕೆಯನ್ನು ನಿನ್ನ ಸಂಗಡ ಮಾಡಿದ್ದೇನೆ: ನೀನು ಅನೇಕ ರಾಷ್ಟ್ರಗಳಿಗೆ ತಂದೆಯಾಗಿರುವೆ.</verse>
				<verse number="5">ಇನ್ನು ಮುಂದೆ, ‘ಅಬ್ರಾಮ್’ ಎಂದು ನಿನಗೆ ಹೆಸರಿರುವುದಿಲ್ಲ. ನಿನ್ನ ಹೆಸರು, ‘ಅಬ್ರಹಾಮ ’ ಎಂದು ಇರುವುದು. ಏಕೆಂದರೆ ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ತಂದೆಯನ್ನಾಗಿ ಮಾಡಿದ್ದೇನೆ.</verse>
				<verse number="6">ನಿನ್ನಿಂದ ಅನೇಕ ಜನಾಂಗಗಳೂ ಅರಸರೂ ಹುಟ್ಟುವರು.</verse>
				<verse number="7">ಇದಲ್ಲದೆ ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನು. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುವೆನು.</verse>
				<verse number="8">ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ತರುವಾಯ ನಿನ್ನ ಸಂತತಿಗೂ ಶಾಶ್ವತವಾದ ಸ್ವತ್ತನ್ನಾಗಿ ಕೊಟ್ಟು, ನಾನು ಅವರಿಗೆ ದೇವರಾಗಿರುವೆನು,” ಎಂದರು.</verse>
				<verse number="9">ಇದಲ್ಲದೆ ದೇವರು ಅಬ್ರಹಾಮನಿಗೆ, “ನೀನೂ, ನಿನ್ನ ತರುವಾಯ ಬರುವ ನಿನ್ನ ಸಂತತಿಯವರೂ ತಲತಲಾಂತರಕ್ಕೂ ನನ್ನ ಒಡಂಬಡಿಕೆಯನ್ನು ಕೈಕೊಂಡು ನಡೆಯಬೇಕು.</verse>
				<verse number="10">ನೀನೂ, ನಿನ್ನ ತರುವಾಯ ನಿನ್ನ ಸಂತತಿಯವರೂ ಕೈಕೊಳ್ಳಬೇಕಾದ ನನ್ನ ಒಡಂಬಡಿಕೆ ಯಾವುದೆಂದರೆ: ನಿಮ್ಮಲ್ಲಿರುವ ಗಂಡಸರೆಲ್ಲರಿಗೂ ಸುನ್ನತಿಯಾಗಬೇಕು.</verse>
				<verse number="11">ನೀವು ಸುನ್ನತಿ ಮಾಡಿಸಿಕೊಳ್ಳುವುದು, ನಿಮಗೂ ನನಗೂ ಉಂಟಾದ ಒಡಂಬಡಿಕೆಗೆ ಗುರುತಾಗಿ ಇರುವುದು.</verse>
				<verse number="12">ನಿಮ್ಮ ಸಂತತಿಯವರಲ್ಲಿ ಪ್ರತಿಯೊಂದು ಗಂಡು ಮಗುವಿಗೂ ಎಂಟು ದಿನಗಳಾದ ಮೇಲೆ ಸುನ್ನತಿ ಮಾಡಿಸಬೇಕು. ಮನೆಯಲ್ಲಿ ಹುಟ್ಟಿದವನಾಗಲಿ, ನಿನ್ನ ಸಂತತಿಯಲ್ಲದೆ ಪರರ ಮಕ್ಕಳಾಗಲಿ, ಕ್ರಯಕ್ಕೆ ತೆಗೆದುಕೊಂಡವನಾಗಲಿ,</verse>
				<verse number="13">ಹೀಗೆ ನಿನ್ನ ಮನೆಯಲ್ಲಿ ಹುಟ್ಟಿದವನಿಗೂ ಕ್ರಯಕ್ಕೆ ತೆಗೆದುಕೊಂಡವನಿಗೂ ಸುನ್ನತಿಯಾಗಬೇಕು. ಈ ನನ್ನ ಒಡಂಬಡಿಕೆಯು ನಿಮ್ಮ ಶರೀರದಲ್ಲಿ ನಿತ್ಯವಾದ ಒಡಂಬಡಿಕೆಯಾಗಿರುವುದನ್ನು ಸೂಚಿಸುವುದು.</verse>
				<verse number="14">ಸುನ್ನತಿ ಮಾಡಿಸಿಕೊಳ್ಳದವನು ನನ್ನ ಒಡಂಬಡಿಕೆಯನ್ನು ಮೀರಿದ ಕಾರಣ, ಅವನನ್ನು ಜನರೊಳಗಿಂದ ಬಹಿಷ್ಕರಿಸಬೇಕು,” ಎಂದರು.</verse>
				<verse number="15">ದೇವರು ಅಬ್ರಹಾಮನಿಗೆ, “ನಿನ್ನ ಹೆಂಡತಿ ಸಾರಯಳ ವಿಷಯದಲ್ಲಾದರೋ, ಆಕೆಯನ್ನು ಸಾರಯಳೆಂದು ಕರೆಯಬೇಡ, ಅವಳ ಹೆಸರು, ‘ಸಾರಾ.’</verse>
				<verse number="16">ಆಕೆಯನ್ನು ನಾನು ಆಶೀರ್ವದಿಸುತ್ತೇನೆ. ಆಕೆಯಿಂದ ನಿನಗೆ ಒಬ್ಬ ಮಗನನ್ನು ಸಹ ಕೊಡುತ್ತೇನೆ. ಆಕೆಯು ಜನಾಂಗಗಳ ತಾಯಿಯಾಗುವಂತೆ ಆಕೆಯನ್ನು ಆಶೀರ್ವದಿಸುತ್ತೇನೆ. ಆಕೆಯಿಂದ ರಾಷ್ಟ್ರಗಳೂ ಅರಸರೂ ಹುಟ್ಟುವರು,” ಎಂದರು.</verse>
				<verse number="17">ಅಬ್ರಹಾಮನು ಅಡ್ಡಬಿದ್ದು ನಕ್ಕು, “ನೂರು ವರ್ಷದವನಿಗೆ ಮಗುವು ಹುಟ್ಟುವುದುಂಟೇ? ತೊಂಬತ್ತು ವರ್ಷದವಳಾದ ಸಾರಳು ಹೆರುವುದುಂಟೋ?” ಎಂದು ತನ್ನ ಹೃದಯದಲ್ಲಿ ಅಂದುಕೊಂಡನು.</verse>
				<verse number="18">ಅಬ್ರಹಾಮನು ದೇವರಿಗೆ, “ಇಷ್ಮಾಯೇಲನು ನಿನ್ನ ಆಶೀರ್ವಾದದಲ್ಲಿ ಬದುಕಲಿ,” ಎಂದನು.</verse>
				<verse number="19">ಅದಕ್ಕೆ ದೇವರು, “ನಿಶ್ಚಯವಾಗಿ ನಿನ್ನ ಹೆಂಡತಿ ಸಾರಳು ಮಗನನ್ನು ಹೆರುವಳು. ಅವನಿಗೆ, ‘ಇಸಾಕ್ ’ ಎಂದು ಹೆಸರಿಡಬೇಕು. ಅವನ ಸಂಗಡವೂ ಅವನ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡವೂ ನಾನು ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.</verse>
				<verse number="20">ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ನಾನು ಅವನನ್ನು ಸಹ ಆಶೀರ್ವದಿಸುವೆನು. ಅವನನ್ನು ಅಭಿವೃದ್ಧಿ ಮಾಡಿ, ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನಿಂದ ದೊಡ್ಡ ಜನಾಂಗವಾಗುವಂತೆ ಮಾಡುವೆನು.</verse>
				<verse number="21">ಆದರೆ ಬರುವ ವರ್ಷ ಈ ಕಾಲದಲ್ಲಿ ಸಾರಳು ನಿನ್ನಿಂದ ಹೆರುವ ಇಸಾಕನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸವೆನು,” ಎಂದು ಹೇಳಿದರು.</verse>
				<verse number="22">ಆಗ ದೇವರು ಅವನ ಸಂಗಡ ಮಾತನಾಡುವುದನ್ನು ಮುಗಿಸಿ, ಅಬ್ರಹಾಮನ ಬಳಿಯಿಂದ ಹೊರಟು ಹೋದರು.</verse>
				<verse number="23">ಅಬ್ರಹಾಮನು ತನ್ನ ಮಗ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿ ಹುಟ್ಟಿದವರೆಲ್ಲರಿಗೂ ತಾನು ಕ್ರಯಕ್ಕೆ ತೆಗೆದುಕೊಂಡವರೆಲ್ಲರಿಗೂ ಹೀಗೆ ತನ್ನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ದೇವರು ತನಗೆ ಹೇಳಿದ ಹಾಗೆ, ಆ ದಿನವೇ ಸುನ್ನತಿ ಮಾಡಿಸಿದನು.</verse>
				<verse number="24">ಅಬ್ರಹಾಮನಿಗೆ ಸುನ್ನತಿಯಾದಾಗ ಅವನು ತೊಂಬತ್ತೊಂಬತ್ತು ವರ್ಷದವನಾಗಿದ್ದನು.</verse>
				<verse number="25">ಅವನ ಮಗ ಇಷ್ಮಾಯೇಲನಿಗೆ ಸುನ್ನತಿಯಾದಾಗ, ಅವನು ಹದಿಮೂರು ವರ್ಷದವನಾಗಿದ್ದನು.</verse>
				<verse number="26">ಅಬ್ರಹಾಮನೂ ಅವನ ಮಗ ಇಷ್ಮಾಯೇಲನೂ ಅದೇ ದಿನದಲ್ಲಿ ಸುನ್ನತಿ ಮಾಡಿಸಿಕೊಂಡರು.</verse>
				<verse number="27">ಅವನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದವರಿಗೂ ಪರರಿಂದ ಕ್ರಯಕ್ಕೆ ತೆಗೆದುಕೊಂಡವರಿಗೂ ಅವನ ಸಂಗಡವೇ ಸುನ್ನತಿ ಆಯಿತು.</verse>
			</chapter>
			<chapter number="18">
				<verse number="1">ಯೆಹೋವ ದೇವರು ಮಮ್ರೆಯ ಮೈದಾನಗಳಲ್ಲಿ ಅಬ್ರಹಾಮನಿಗೆ ಕಾಣಿಸಿಕೊಂಡರು. ಹಗಲಿನ ಬಿಸಿಲಿನಲ್ಲಿ ಅವನು ಡೇರೆಯ ಬಾಗಿಲಿನಲ್ಲಿ ಕುಳಿತುಕೊಂಡಿದ್ದನು.</verse>
				<verse number="2">ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು, ಮೂವರು ಪುರುಷರು ಹತ್ತಿರದಲ್ಲಿ ನಿಂತಿದ್ದರು. ಅವನು ಅವರನ್ನು ಕಂಡು ಅವರಿಗೆ ಎದುರಾಗಿ ಡೇರೆಯ ಬಾಗಿಲಿನಿಂದ ಓಡಿಬಂದು ನೆಲದವರೆಗೂ ಬಗ್ಗಿ ನಮಸ್ಕರಿಸಿದನು.</verse>
				<verse number="3">ಅಬ್ರಹಾಮನು ಅವರಿಗೆ, “ನನ್ನ ಸ್ವಾಮಿ, ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆತಿದ್ದರೆ, ನಿಮ್ಮ ದಾಸನ ಬಳಿಯಿಂದ ಹೊರಟು ಹೋಗಬೇಡಿ.</verse>
				<verse number="4">ಸ್ವಲ್ಪ ನೀರು ತೆಗೆದುಕೊಂಡು ಬರುತ್ತೇನೆ, ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ, ಮರದ ಕೆಳಗೆ ವಿಶ್ರಮಿಸಿಕೊಳ್ಳಿರಿ.</verse>
				<verse number="5">ನಾನು ಸ್ವಲ್ಪ ಆಹಾರವನ್ನು ತರುತ್ತೇನೆ. ತರುವಾಯ ನೀವು ಮುಂದೆ ಹೊರಟು ಹೋಗಬಹುದು. ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ,” ಎಂದು ಬೇಡಿಕೊಂಡನು. ಅದಕ್ಕೆ ಅವರು, “ನೀನು ಹೇಳಿದಂತೆಯೇ ಮಾಡು,” ಎಂದರು.</verse>
				<verse number="6">ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ, “ಬೇಗನೇ ಮೂರು ಸೇರು ನಯವಾದ ಹಿಟ್ಟು ನಾದಿ, ಒಲೆಯ ಮೇಲೆ ರೊಟ್ಟಿಗಳನ್ನು ಮಾಡು,” ಎಂದನು.</verse>
				<verse number="7">ಅಬ್ರಹಾಮನು ದನದ ಮಂದೆಯ ಬಳಿಗೆ ಓಡಿಹೋಗಿ, ಒಳ್ಳೆಯ ಕರುವನ್ನು ತೆಗೆದುಕೊಂಡು ಒಬ್ಬ ಸೇವಕನಿಗೆ ಕೊಟ್ಟನು. ಆ ಸೇವಕನು ಬೇಗನೆ ಅಡಿಗೆಯನ್ನು ಸಿದ್ಧಪಡಿಸಿದನು.</verse>
				<verse number="8">ತರುವಾಯ ಮೊಸರನ್ನೂ, ಹಾಲನ್ನೂ, ಪಕ್ವಮಾಡಿದ ಮಾಂಸವನ್ನೂ ತೆಗೆದುಕೊಂಡು ಅವರ ಮುಂದೆ ಇಟ್ಟನು. ಅವನಾದರೋ ಮರದ ಕೆಳಗೆ ಅವರ ಹತ್ತರ ನಿಂತುಕೊಂಡನು. ಅವರು ಊಟಮಾಡಿದರು.</verse>
				<verse number="9">ಅವರು ಅಬ್ರಹಾಮನಿಗೆ, “ನಿನ್ನ ಹೆಂಡತಿ ಸಾರಳು ಎಲ್ಲಿ?” ಎಂದು ಕೇಳಲು, ಅವನು, “ಇಗೋ, ಡೇರೆಯಲ್ಲಿದ್ದಾಳೆ,” ಎಂದನು.</verse>
				<verse number="10">ಆಗ ಆ ಮೂವರಲ್ಲಿ ಒಬ್ಬರು, “ಬರುವ ವರ್ಷ ಇದೇ ಸಮಯದಲ್ಲಿ ನಾನು ನಿಶ್ಚಯವಾಗಿ ತಿರುಗಿ ನಿನ್ನ ಬಳಿಗೆ ಬರುವೆನು. ಆಗ ನಿನ್ನ ಹೆಂಡತಿ ಸಾರಳಿಗೆ ಒಬ್ಬ ಮಗನಿರುವನು,” ಎಂದನು. ಸಾರಳು ಅವರ ಹಿಂದೆ ಇದ್ದ ಡೇರೆಯ ಬಾಗಿಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.</verse>
				<verse number="11">ಅಬ್ರಹಾಮನೂ ಸಾರಳೂ ವಯಸ್ಸಾಗಿ, ಮುದುಕರಾಗಿದ್ದರು. ಸಾರಳಿಗೆ ಮಗುವನ್ನು ಹೆರುವ ಕಾಲ ಮುಗಿದು ಹೋಗಿತ್ತು.</verse>
				<verse number="12">ಆದ್ದರಿಂದ ಸಾರಳು ತನ್ನೊಳಗೆ ನಕ್ಕು, “ನಾನು ವೃದ್ಧಳಾಗಿದ್ದೇನೆ, ನನ್ನ ಯಜಮಾನನು ಸಹ ಮುದುಕನಾಗಿದ್ದಾನೆ. ಹೀಗಿರುವಲ್ಲಿ ನನ್ನಿಂದ ಮಗುವನ್ನು ಹೆರುವದಾದೀತೇ?” ಎಂದುಕೊಂಡಳು.</verse>
				<verse number="13">ಆಗ ಯೆಹೋವ ದೇವರು ಅಬ್ರಹಾಮನಿಗೆ, “ನಾನು ಮುದಿಪ್ರಾಯದವಳಾಗಿ ಮಗುವನ್ನು ಹೆರುವುದು ನಿಜವೋ? ಎಂದುಕೊಂಡು ಸಾರಳು ಏಕೆ ನಕ್ಕಳು?</verse>
				<verse number="14">ಯೆಹೋವ ದೇವರಿಗೆ ಅಸಾಧ್ಯವಾದದ್ದು ಯಾವುದಾದರೂ ಇದೆಯೋ? ಬರುವ ವರ್ಷ ಇದೇ ಸಮಯದಲ್ಲಿ ನಾನು ತಿರುಗಿ ನಿನ್ನ ಬಳಿಗೆ ಬರುವೆನು. ಆಗ ಸಾರಳಿಗೆ ಒಬ್ಬ ಮಗನಿರುವನು,” ಎಂದರು.</verse>
				<verse number="15">ಆದರೆ ಸಾರಳು ಭಯಪಟ್ಟು, “ನಾನು ನಗಲಿಲ್ಲ,” ಎಂದು ಹೇಳಿ ಸುಳ್ಳಾಡಿದಾಗ, ದೇವರು, “ನೀನು ನಕ್ಕದ್ದು ನಿಜ,” ಎಂದರು.</verse>
				<verse number="16">ತರುವಾಯ ಆ ಮನುಷ್ಯರು ಎದ್ದು ಅಲ್ಲಿಂದ ಸೊದೋಮಿನ ಕಡೆಗೆ ನೋಡಿದರು. ಅಬ್ರಹಾಮನು ಅವರನ್ನು ಕಳುಹಿಸಿಕೊಡುವುದಕ್ಕೆ ಅವರ ಸಂಗಡ ಹೋದನು.</verse>
				<verse number="17">ಆಗ ಯೆಹೋವ ದೇವರು, “ನಾನು ಮಾಡುವುದನ್ನು ಅಬ್ರಹಾಮನಿಗೆ ಮರೆಮಾಡಲೋ?</verse>
				<verse number="18">ಅಬ್ರಹಾಮನು ನಿಶ್ಚಯವಾಗಿ ಬಲವಾದ ದೊಡ್ಡ ಜನಾಂಗವಾಗುವನು, ಅವನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು.</verse>
				<verse number="19">ಏಕೆಂದರೆ, ಅವನು ತನ್ನ ಮಕ್ಕಳಿಗೂ ಅವನ ತರುವಾಯ ಅವನ ಮನೆಯವರಿಗೂ ಯೆಹೋವ ದೇವರ ಮಾರ್ಗವನ್ನು ಕೈಗೊಂಡು, ನೀತಿ ನ್ಯಾಯಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸುವನು. ಆಗ ಯೆಹೋವ ದೇವರಾದ ನಾನು ಅಬ್ರಹಾಮನಿಗೆ ಹೇಳಿದ್ದು ನೆರವೇರುವದು,” ಎಂದುಕೊಂಡರು.</verse>
				<verse number="20">ಇದಲ್ಲದೆ ಯೆಹೋವ ದೇವರು, “ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿದೆ. ಅವರ ಪಾಪವೂ ಘೋರವಾಗಿದೆ.</verse>
				<verse number="21">ನಾನು ಇಳಿದು ಹೋಗಿ ನನ್ನ ಬಳಿಗೆ ಬಂದ ಆ ಊರಿನವರ ಕೂಗಿನ ಪ್ರಕಾರವೇ, ಅವರು ಮಾಡಿದ್ದಾರೋ, ಇಲ್ಲವೋ, ಎಂದು ನೋಡಿ ತಿಳಿದುಕೊಳ್ಳುವೆನು,” ಎಂದುಕೊಂಡರು.</verse>
				<verse number="22">ಆ ಮನುಷ್ಯರು ಅಲ್ಲಿಂದ ತಮ್ಮ ಮುಖಗಳನ್ನು ತಿರುಗಿಸಿಕೊಂಡು, ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಇನ್ನೂ ಯೆಹೋವ ದೇವರ ಮುಂದೆ ನಿಂತುಕೊಂಡಿದ್ದನು.</verse>
				<verse number="23">ಆಗ ಅಬ್ರಹಾಮನು ಹತ್ತಿರ ಬಂದು, “ದುಷ್ಟರ ಜೊತೆ ನೀತಿವಂತರನ್ನೂ ನಾಶಮಾಡುವಿರೋ?</verse>
				<verse number="24">ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ, ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿರೋ?</verse>
				<verse number="25">ಈ ರೀತಿಯಾಗಿ ನೀತಿವಂತರಿಗೂ ದುಷ್ಟರಿಗೂ ಭೇದ ಮಾಡದೆ, ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವುದು ನಿಮ್ಮಿಂದ ಎಂದಿಗೂ ಆಗಬಾರದು. ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿರುವ ತಾವು ನ್ಯಾಯವಾದದ್ದನ್ನೇ ಮಾಡಬೇಕಲ್ಲವೇ?” ಎಂದನು.</verse>
				<verse number="26">ಅದಕ್ಕೆ ಯೆಹೋವ ದೇವರು, “ನನಗೆ ಸೊದೋಮ್ ಪಟ್ಟಣದೊಳಗೆ ಐವತ್ತು ಮಂದಿ ನೀತಿವಂತರು ಸಿಕ್ಕಿದರೆ, ಅವರಿಗೋಸ್ಕರ ಆ ಸ್ಥಳವನ್ನೆಲ್ಲಾ ಉಳಿಸುವೆನು,” ಎಂದರು.</verse>
				<verse number="27">ಆಗ ಅಬ್ರಹಾಮನು, “ಇಗೋ, ಮಣ್ಣೂ, ಬೂದಿಯೂ ಆಗಿರುವ ನಾನು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ಧೈರ್ಯಗೊಂಡಿದ್ದೇನೆ.</verse>
				<verse number="28">ಒಂದು ವೇಳೆ ಐವತ್ತು ನೀತಿವಂತರಲ್ಲಿ ಐದು ಮಂದಿ ಕಡಿಮೆ ಇದ್ದರೆ, ಆ ಐದು ಮಂದಿ ಇಲ್ಲದ್ದರಿಂದ ಪಟ್ಟಣವನ್ನು ನಾಶಮಾಡುವಿರೋ?” ಎಂದು ಕೇಳಿದನು. ಅದಕ್ಕೆ ದೇವರು, “ನಲವತ್ತೈದು ಮಂದಿ ಅಲ್ಲಿ ಸಿಕ್ಕಿದರೆ ನಾನು ನಾಶಮಾಡುವುದಿಲ್ಲ,” ಎಂದರು.</verse>
				<verse number="29">ಅಬ್ರಹಾಮನು ದೇವರ ಸಂಗಡ ಇನ್ನೂ ಮಾತನಾಡಿ, “ಅಲ್ಲಿ ನಲವತ್ತು ಮಂದಿ ದೊರೆತರೆ, ಏನು ಮಾಡುವಿರಿ?” ಎನ್ನಲು, ಅದಕ್ಕೆ ದೇವರು, “ನಲವತ್ತು ಮಂದಿಗೋಸ್ಕರ ಅದನ್ನು ನಾನು ನಾಶಮಾಡುವುದಿಲ್ಲ,” ಎಂದರು.</verse>
				<verse number="30">ಅವನು, “ಯೆಹೋವ ದೇವರಿಗೆ ಕೋಪಬಾರದೆ ಇರಲಿ, ನಾನು ಮಾತನಾಡುತ್ತೇನೆ. ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಇದ್ದರೆ,” ಎಂದಾಗ, ದೇವರು, “ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ, ನಾಶಮಾಡುವುದಿಲ್ಲ,” ಎಂದರು.</verse>
				<verse number="31">ಅವನು, “ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ಬಂದಿದ್ದೇನೆ. ಒಂದು ವೇಳೆ ಇಪ್ಪತ್ತು ಮಂದಿ ಸಿಕ್ಕಿದರೆ ಏನು ಮಾಡುವಿರಿ?” ಎಂದನು. ಅದಕ್ಕೆ ದೇವರು, “ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವುದಿಲ್ಲ,” ಎಂದರು.</verse>
				<verse number="32">ಆಗ ಅವನು, “ಯೆಹೋವ ದೇವರೇ, ನಿಮಗೆ ಕೋಪಬಾರದೆ ಇರಲಿ. ಇನ್ನು ಒಂದೇ ಸಾರಿ ಮಾತನಾಡುತ್ತೇನೆ. ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಿದರೆ,” ಎಂದಾಗ, ದೇವರು, “ಹತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವುದಿಲ್ಲ,” ಎಂದರು.</verse>
				<verse number="33">ಯೆಹೋವ ದೇವರು ಅಬ್ರಹಾಮನ ಸಂಗಡ ಮಾತನಾಡುವುದನ್ನು ಮುಗಿಸಿದ ಕೂಡಲೆ ಹೊರಟು ಹೋದರು. ಅಬ್ರಹಾಮನು ತನ್ನ ಮನೆಗೆ ಹಿಂದಿರುಗಿದನು.</verse>
			</chapter>
			<chapter number="19">
				<verse number="1">ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ, ಲೋಟನು ಸೊದೋಮಿನ ಬಾಗಿಲಲ್ಲಿ ಕುಳಿತಿದ್ದನು. ಲೋಟನು ಅವರನ್ನು ಎದುರುಗೊಳ್ಳುವುದಕ್ಕೆ ಎದ್ದು ನೆಲದವರೆಗೆ ಬಾಗಿ,</verse>
				<verse number="2">“ಸ್ವಾಮಿಗಳೇ, ನೀವು ನಿಮ್ಮ ದಾಸನ ಮನೆಯಲ್ಲಿ ತಂಗಿ, ರಾತ್ರಿ ಕಳೆಯಿರಿ. ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ. ಬೆಳಿಗ್ಗೆ ಎದ್ದು ನಿಮ್ಮ ಮಾರ್ಗವನ್ನು ಹಿಡಿದು ಹೋಗಬಹುದು,” ಎಂದು ಬೇಡಿಕೊಂಡನು. ಅದಕ್ಕೆ ಅವರು, “ಹಾಗಲ್ಲ, ನಾವು ರಾತ್ರಿಯೆಲ್ಲಾ ಬೀದಿಯಲ್ಲಿ ಇರುತ್ತೇವೆ,” ಎಂದರು.</verse>
				<verse number="3">ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ, ಅವರು ತಿರುಗಿಬಂದು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣ ಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸಿದ್ಧಮಾಡಿದನು. ಅವರು ಊಟಮಾಡಿದರು.</verse>
				<verse number="4">ಆದರೆ ಅವರು ಮಲಗುವುದಕ್ಕಿಂತ ಮುಂಚೆ ಸೊದೋಮ್ ಪಟ್ಟಣದ ಜನರು, ಹುಡುಗರು ಮೊದಲುಗೊಂಡು ಮುದುಕರವರೆಗೆ ಎಲ್ಲಾ ಜನರೂ ಪ್ರತಿಯೊಂದು ಮೂಲೆಯಿಂದ ಕೂಡಿ, ಮನೆಯನ್ನು ಸುತ್ತಿಕೊಂಡರು.</verse>
				<verse number="5">ಅವರು ಲೋಟನನ್ನು ಕರೆದು, “ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಕರೆದುಕೊಂಡು ಬಾ, ಅವರೊಡನೆ ಸಂಭೋಗಿಸಬೇಕು,” ಎಂದು ಹೇಳಿದರು.</verse>
				<verse number="6">ಆಗ ಲೋಟನು ಅವರ ಬಳಿಗೆ ಬಂದು ಬಾಗಿಲನ್ನು ತನ್ನ ಹಿಂದೆ ಮುಚ್ಚಿಕೊಂಡು,</verse>
				<verse number="7">“ನನ್ನ ಸಹೋದರರೇ, ಈ ದುಷ್ಟತನವನ್ನು ಮಾಡಬೇಡಿರಿ.</verse>
				<verse number="8">ಗಂಡಸರನ್ನು ಅರಿಯದ ಇಬ್ಬರು ಪುತ್ರಿಯರು ನನಗೆ ಇದ್ದಾರೆ. ಅವರನ್ನು ನಿಮ್ಮ ಬಳಿಗೆ ಕರೆ ತರುವೆನು. ನಿಮ್ಮ ದೃಷ್ಟಿಗೆ ಒಳ್ಳೆಯದೆಂದು ಕಾಣುವ ಹಾಗೆ ನೀವು ಅವರಿಗೆ ಮಾಡಿರಿ. ಆ ಮನುಷ್ಯರಿಗೆ ಮಾತ್ರ ಏನೂ ಮಾಡಬೇಡಿರಿ. ಏಕೆಂದರೆ ಅವರು ನನ್ನ ಮನೆಯ ಆಶ್ರಯಕ್ಕೆ ಬಂದಿದ್ದಾರೆ,” ಎಂದು ಬೇಡಿಕೊಂಡನು.</verse>
				<verse number="9">ಆದರೆ ಅವರು, “ಹಿಂದಕ್ಕೆ ಸರಿ,” ಎಂದು ಹೇಳಿ, “ಇವನು ಪ್ರವಾಸಿಯಾಗಿ ಬಂದು ನ್ಯಾಯಾಧಿಪತಿಯಾಗಲು ಯತ್ನಿಸುತ್ತಿದ್ದಾನೆ. ಈಗ ನಿನಗೆ ಅವರಿಗಿಂತ ಹೆಚ್ಚು ಕೇಡು ಮಾಡುತ್ತೇವೆ,” ಎಂದರು. ಅವರು ಲೋಟನನ್ನು ಬಲವಾಗಿ ತುಳಿದು, ಬಾಗಿಲನ್ನು ಮುರಿಯಲು ಸಮೀಪಕ್ಕೆ ಬಂದರು.</verse>
				<verse number="10">ಆಗ ಲೋಟನ ಮನೆಗೆ ಬಂದಿದ್ದ ಆ ದೂತರಿಬ್ಬರು ತಮ್ಮ ಕೈಯಿಂದ ಲೋಟನನ್ನು ತಮ್ಮ ಕಡೆಗೆ ಒಳಕ್ಕೆ ಎಳೆದುಕೊಂಡು ಬಾಗಿಲನ್ನು ಮುಚ್ಚಿದರು.</verse>
				<verse number="11">ಬಾಗಿಲಲ್ಲಿದ್ದವರನ್ನು ಕಿರಿಯರಿಂದ ಹಿರಿಯರವರೆಗೆ ಕುರುಡಾಗುವಂತೆ ಮಾಡಿದರು. ಆಗ ಆ ಊರಿನವರು ಬಾಗಿಲನ್ನು ಕಂಡುಕೊಳ್ಳದೆ ಬೇಸರಗೊಂಡರು.</verse>
				<verse number="12">ಆ ದೂತರಿಬ್ಬರು ಲೋಟನಿಗೆ, “ಇಲ್ಲಿ ನಿನಗೆ ಇನ್ನೂ ಯಾರಾದರೂ ಇದ್ದಾರೋ? ನಿನ್ನ ಅಳಿಯಂದಿರನ್ನೂ, ನಿನ್ನ ಪುತ್ರರನ್ನೂ, ಪುತ್ರಿಯರನ್ನೂ, ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಈ ಸ್ಥಳದಿಂದ ಹೊರಗೆ ಕರೆದುಕೊಂಡು ಬಾ.</verse>
				<verse number="13">ಏಕೆಂದರೆ ಈ ಸ್ಥಳದವರ ಕೂಗು ಯೆಹೋವ ದೇವರ ಸನ್ನಿಧಿಯಲ್ಲಿ ದೊಡ್ಡದಾಗಿರುವುದರಿಂದ ನಾವು ಇದನ್ನು ನಾಶ ಮಾಡುತ್ತೇವೆ. ಯೆಹೋವ ದೇವರು ನಮ್ಮನ್ನು ಕಳುಹಿಸಿದ್ದಾರೆ.”</verse>
				<verse number="14">ಆಗ ಲೋಟನು ಹೊರಟುಹೋಗಿ, ತನ್ನ ಪುತ್ರಿಯರನ್ನು ಗೊತ್ತುಮಾಡಿದ್ದ ಅಳಿಯಂದಿರ ಸಂಗಡ ಮಾತನಾಡಿ, “ಎದ್ದು ಈ ಸ್ಥಳದಿಂದ ಹೊರಡಿರಿ. ಏಕೆಂದರೆ ಯೆಹೋವ ದೇವರು ಈ ಪಟ್ಟಣವನ್ನು ನಾಶಮಾಡುವುದಕ್ಕಿದ್ದಾರೆ,” ಎಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಪರಿಹಾಸ್ಯಮಾಡುವಂತೆ ಕಾಣಿಸಿದನು.</verse>
				<verse number="15">ಸೂರ್ಯೋದಯವಾಗುವ ಮೊದಲು ದೂತರು ಲೋಟನನ್ನು ತ್ವರೆಪಡಿಸಿ, “ಈ ಪಟ್ಟಣಕ್ಕೆ ಉಂಟಾಗುವ ದಂಡನೆಯಿಂದ ನೀನು ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಪುತ್ರಿಯರನ್ನೂ ಕರೆದುಕೊಂಡು ನಡೆ,” ಎಂದರು.</verse>
				<verse number="16">ಅವರು ತಡಮಾಡಿದಾಗ ಯೆಹೋವ ದೇವರು ಅವನನ್ನು ಕನಿಕರಿಸಿದ್ದರಿಂದ, ಆ ದೂತರು ಅವನ ಕೈಯನ್ನೂ, ಅವನ ಹೆಂಡತಿಯ ಕೈಯನ್ನೂ, ಅವನ ಇಬ್ಬರು ಪುತ್ರಿಯರ ಕೈಗಳನ್ನೂ ಹಿಡಿದು, ಅವರನ್ನು ಪಟ್ಟಣದ ಹೊರಗೆ ತಂದುಬಿಟ್ಟರು.</verse>
				<verse number="17">ಅವರನ್ನು ಹೊರಗೆ ತಂದಮೇಲೆ ಅವರಲ್ಲಿ ಒಬ್ಬನು, “ಹಿಂದಕ್ಕೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ. ನೀನು ನಾಶವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಓಡಿಹೋಗು,” ಎಂದನು.</verse>
				<verse number="18">ಅದಕ್ಕೆ ಲೋಟನು, “ಸ್ವಾಮಿ, ಅದು ನನ್ನಿಂದಾಗದು.</verse>
				<verse number="19">ಈಗ ನಿನ್ನ ದಾಸನಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಿದೆ. ನನ್ನ ಪ್ರಾಣವನ್ನು ಉಳಿಸುವ ಹಾಗೆ ನೀನು ನನಗೆ ಮಾಡಿದ ದಯೆ ದೊಡ್ಡದು. ಆದರೆ ನಾನು ತಪ್ಪಿಸಿಕೊಂಡು ಬೆಟ್ಟಕ್ಕೆ ಓಡಿಹೋಗಲಾರೆನು, ನನಗೆ ವಿಪತ್ತು ಉಂಟಾಗಿ ಸತ್ತೇನು.</verse>
				<verse number="20">ಆ ಪಟ್ಟಣವನ್ನು ನೋಡಿರಿ. ನಾನು ಅಲ್ಲಿಗೆ ಓಡಿಹೋಗಲು ಸಮೀಪವಾಗಿದೆ ಮತ್ತು ಅದು ಸಣ್ಣದು. ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುತ್ತೇನೆ. ಇದರಿಂದ ನನ್ನ ಪ್ರಾಣವು ಉಳಿಯುವುದು,” ಎಂದನು.</verse>
				<verse number="21">ದೂತನು ಅವನಿಗೆ, “ಈ ವಿಷಯದಲ್ಲಿಯೂ ನಾನು ನಿನ್ನ ಬೇಡಿಕೆಯನ್ನು ಅಂಗೀಕರಿಸಿದ್ದೇನೆ. ನೋಡು, ನೀನು ಹೇಳಿದ ಆ ಊರನ್ನು ನಾನು ಕೆಡವಿ ಹಾಕುವುದಿಲ್ಲ.</verse>
				<verse number="22">ಬೇಗನೆ ತಪ್ಪಿಸಿಕೊಂಡು ಅಲ್ಲಿಗೆ ಹೋಗು, ಏಕೆಂದರೆ ನೀನು ಅಲ್ಲಿ ಸೇರುವ ತನಕ ನಾನೇನೂ ಮಾಡಲಾರೆನು,” ಎಂದನು. ಆದ್ದರಿಂದ ಆ ಊರಿಗೆ ಚೋಗರ್ ಎಂದು ಹೆಸರಾಯಿತು.</verse>
				<verse number="23">ಲೋಟನು ಚೋಗರಿಗೆ ಬಂದಾಗ ಸೂರ್ಯೋದಯವಾಗಿತ್ತು.</verse>
				<verse number="24">ಆಗ ಯೆಹೋವ ದೇವರು ಸೊದೋಮ್ ಮತ್ತು ಗೊಮೋರದ ಮೇಲೆ ಗಂಧಕವನ್ನೂ, ಬೆಂಕಿಯನ್ನೂ ಆಕಾಶದಿಂದ ಸುರಿಸಿದರು.</verse>
				<verse number="25">ಹೀಗೆ ದೇವರು ಆ ಪಟ್ಟಣಗಳನ್ನೂ, ಅಲ್ಲಿಯ ಪ್ರದೇಶವನ್ನೂ, ಪಟ್ಟಣಗಳ ಎಲ್ಲಾ ನಿವಾಸಿಗಳನ್ನೂ, ಭೂಮಿಯ ಮೇಲೆ ಬೆಳೆದ ಬೆಳೆಯನ್ನೂ ಅಳಿಸಿಬಿಟ್ಟರು.</verse>
				<verse number="26">ಆದರೆ ಲೋಟನ ಹಿಂದೆ ಬರುತ್ತಿದ್ದ ಅವನ ಹೆಂಡತಿಯು ಹಿಂದಿರುಗಿ ನೋಡಿ ಉಪ್ಪಿನ ಸ್ತಂಭವಾದಳು.</verse>
				<verse number="27">ಅಬ್ರಹಾಮನು ಬೆಳಿಗ್ಗೆ ಎದ್ದು, ತಾನು ಯೆಹೋವ ದೇವರ ಸನ್ನಿಧಿಯಲ್ಲಿ ನಿಂತಿದ್ದ ಆ ಸ್ಥಳಕ್ಕೆ ಹೋದನು.</verse>
				<verse number="28">ಅವನು ಸೊದೋಮ್ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶಗಳ ಕಡೆಗೂ ನೋಡಿದನು. ಆ ಪ್ರದೇಶದಿಂದ ಹೊಗೆಯು ಕುಲುಮೆಯ ಹೊಗೆಯಂತೆ ಏರುತ್ತಿತ್ತು.</verse>
				<verse number="29">ದೇವರು ಆ ಬಯಲುಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ, ಲೋಟನು ವಾಸವಾಗಿದ್ದ ಪಟ್ಟಣಗಳನ್ನು ನಾಶಮಾಡಿದರು. ಆದರೆ ಅಬ್ರಹಾಮನನ್ನು ಜ್ಞಾಪಕಮಾಡಿಕೊಂಡು, ಲೋಟನನ್ನು ಹೊರಗೆ ಕಳುಹಿಸಿ ಪಾರು ಮಾಡಿದರು.</verse>
				<verse number="30">ಲೋಟನು ಚೋಗರಿನಲ್ಲಿ ವಾಸಿಸಲು ಭಯಪಟ್ಟು, ತನ್ನ ಇಬ್ಬರು ಪುತ್ರಿಯರ ಸಂಗಡ ಬೆಟ್ಟದ ಮೇಲೆ ಹೋಗಿ ವಾಸಮಾಡಿದನು. ಅಲ್ಲಿ ಅವನೂ ಅವನ ಇಬ್ಬರು ಪುತ್ರಿಯರೂ ಒಂದು ಗವಿಯಲ್ಲಿ ವಾಸವಾಗಿದ್ದರು.</verse>
				<verse number="31">ಆಗ ಹಿರಿಯ ಮಗಳು ಚಿಕ್ಕವಳಿಗೆ, “ನಮ್ಮ ತಂದೆಯು ಮುದುಕನಾಗಿದ್ದಾನೆ. ಲೋಕದ ಎಲ್ಲಾ ಕ್ರಮದ ಪ್ರಕಾರ ನಮ್ಮೊಂದಿಗಿರಲು ನಮ್ಮ ಸುತ್ತಲಿನ ಪ್ರದೇಶದಲ್ಲಿ ಪುರುಷರಿಲ್ಲ.</verse>
				<verse number="32">ಆದ್ದರಿಂದ ನಾವು ನಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ, ನಾವು ಅವನ ಸಂಗಡ ಮಲಗಿಕೊಳ್ಳೋಣ. ಏಕೆಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು,” ಎಂದಳು.</verse>
				<verse number="33">ಆ ರಾತ್ರಿಯಲ್ಲಿ ಅವರು ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು. ಆಗ ಹಿರಿಯ ಮಗಳು ಬಂದು ತನ್ನ ತಂದೆಯ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಂಡದ್ದೂ, ಎದ್ದು ಹೋದದ್ದೂ ಅವನಿಗೆ ತಿಳಿಯಲಿಲ್ಲ.</verse>
				<verse number="34">ಮರುದಿನ ಹಿರಿಯವಳು ಚಿಕ್ಕವಳಿಗೆ, “ಕಳೆದ ರಾತ್ರಿ ತಂದೆಯ ಸಂಗಡ ನಾನು ಮಲಗಿಕೊಂಡೆನು. ಈ ರಾತ್ರಿಯಲ್ಲಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸಿ, ನೀನು ಹೋಗಿ ಅವನ ಸಂಗಡ ಮಲಗಿಕೋ. ಏಕೆಂದರೆ ನಾವು ನಮ್ಮ ತಂದೆಯ ಸಂತಾನವನ್ನು ಉಳಿಸಬೇಕು,” ಎಂದಳು.</verse>
				<verse number="35">ಹಾಗೆ ಆ ರಾತ್ರಿಯಲ್ಲಿಯೂ ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು. ಆಗ ಚಿಕ್ಕವಳು ಎದ್ದು, ಅವನ ಸಂಗಡ ಮಲಗಿಕೊಂಡಳು. ಅವಳು ಮಲಗಿಕೊಂಡದ್ದೂ, ಎದ್ದು ಹೋದದ್ದೂ ಅವನಿಗೆ ತಿಳಿಯಲಿಲ್ಲ.</verse>
				<verse number="36">ಈ ಪ್ರಕಾರ ಲೋಟನ ಇಬ್ಬರು ಪುತ್ರಿಯರು ತಮ್ಮ ತಂದೆಯಿಂದ ಗರ್ಭಿಣಿಯರಾದರು.</verse>
				<verse number="37">ಹಿರಿಯ ಮಗಳು ಮಗನನ್ನು ಹೆತ್ತು, ಅವನಿಗೆ ಮೋವಾಬ್ ಎಂದು ಹೆಸರಿಟ್ಟಳು. ಈಗಿನ ಮೋವಾಬ್ಯರಿಗೂ ಇವನೇ ತಂದೆ.</verse>
				<verse number="38">ಚಿಕ್ಕವಳು ಸಹ ಮಗನನ್ನು ಹೆತ್ತು, ಅವನಿಗೆ ಬೆನಮ್ಮಿ ಎಂದು ಹೆಸರಿಟ್ಟಳು. ಈಗಿನ ಅಮ್ಮೋನಿಯರಿಗೂ ಇವನೇ ತಂದೆ.</verse>
			</chapter>
			<chapter number="20">
				<verse number="1">ಅಬ್ರಹಾಮನು ಅಲ್ಲಿಂದ ನೆಗೆವ ಕಡೆಗೆ ಕಾದೇಶಿಗೆ ಪ್ರಯಾಣಮಾಡಿ, ಕಾದೇಶ್ ಹಾಗೂ ಶೂರಿನ ಮಧ್ಯದ ಗೆರಾರಿನಲ್ಲಿ ಸ್ವಲ್ಪಕಾಲ ಪ್ರವಾಸಿಯಾಗಿದ್ದನು.</verse>
				<verse number="2">ಗೆರಾರಿನಲ್ಲಿ ಅಬ್ರಹಾಮನು ತನ್ನ ಹೆಂಡತಿ ಸಾರಳ ವಿಷಯವಾಗಿ, “ಅವಳು ನನ್ನ ತಂಗಿ,” ಎಂದು ಹೇಳಿದ್ದನು. ಆದ್ದರಿಂದ ಗೆರಾರಿನ ಅರಸ ಅಬೀಮೆಲೆಕನು ಸಾರಳನ್ನು ಕರೆಯಿಸಿ ತನ್ನ ಅರಮನೆಗೆ ತೆಗೆದುಕೊಂಡನು.</verse>
				<verse number="3">ಆದರೆ ದೇವರು ಅಬೀಮೆಲೆಕನಿಗೆ ರಾತ್ರಿಯ ಕನಸಿನಲ್ಲಿ ಬಂದು, “ನೀನು ಆ ಸ್ರೀಯನ್ನು ತೆಗೆದುಕೊಂಡ ಕಾರಣ ಸಾಯತಕ್ಕವನಾಗಿದ್ದಿ, ಏಕೆಂದರೆ ಆಕೆಯು ಆ ಮನುಷ್ಯನ ಹೆಂಡತಿ,” ಎಂದು ಅವನಿಗೆ ಹೇಳಿದರು.</verse>
				<verse number="4">ಆದರೆ ಅಬೀಮೆಲೆಕನು ಆಕೆಯ ಸಮೀಪಕ್ಕೆ ಬಂದಿರಲಿಲ್ಲ. ಆದ್ದರಿಂದ ಅವನು, “ಪ್ರಭುವೇ, ನಿರಪರಾಧಿಯಾದ ಪ್ರಜೆಯನ್ನು ನೀವು ನಾಶಮಾಡುವಿರೋ?</verse>
				<verse number="5">ಅವನು ನನಗೆ, ‘ಅವಳು ನನ್ನ ತಂಗಿ,’ ಎಂದು ಹೇಳಲಿಲ್ಲವೋ? ಅವಳೇ, ‘ಅವನು ನನ್ನ ಅಣ್ಣ,’ ಎಂದು ಹೇಳಿದ್ದಾಳೆ. ಆದ್ದರಿಂದ ನಾನು ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಹಸ್ತದಿಂದಲೂ ಇದನ್ನು ಮಾಡಿದ್ದೇನೆ,” ಎಂದನು.</verse>
				<verse number="6">ಅದಕ್ಕೆ ದೇವರು ಕನಸಿನಲ್ಲಿ ಅವನಿಗೆ, “ಹೌದು, ನೀನು ಇದನ್ನು ಯಥಾರ್ಥವಾದ ಹೃದಯದಿಂದಲೇ ಮಾಡಿದ್ದೀಯೆ ಎಂದು ನನಗೂ ತಿಳಿದಿದೆ. ಆದ್ದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು, ಆಕೆಯನ್ನು ಮುಟ್ಟಗೊಡಿಸಲಿಲ್ಲ.</verse>
				<verse number="7">ಈಗ ಆ ಮನುಷ್ಯನ ಹೆಂಡತಿಯನ್ನು ನೀನು ಹಿಂದಕ್ಕೆ ಕಳುಹಿಸಿಬಿಡು. ಏಕೆಂದರೆ ಅವನು ಪ್ರವಾದಿಯಾಗಿದ್ದಾನೆ. ನೀನು ಬದುಕುವಂತೆ ಅವನು ನಿನಗೋಸ್ಕರ ಪ್ರಾರ್ಥಿಸುವನು. ನೀನು ಆಕೆಯನ್ನು ಹಿಂದಕ್ಕೆ ಕಳುಹಿಸದಿದ್ದರೆ, ನೀನೂ ನಿನ್ನವರೆಲ್ಲರೂ ಖಂಡಿತವಾಗಿ ಸಾಯುವಿರಿ ಎಂದು ತಿಳಿದುಕೋ,” ಎಂದರು.</verse>
				<verse number="8">ಅಬೀಮೆಲೆಕನು ಬೆಳಿಗ್ಗೆ ಎದ್ದು, ತನ್ನ ಸೇವಕರೆಲ್ಲರನ್ನೂ ಕರೆದು, ಇವುಗಳನ್ನೆಲ್ಲಾ ಅವರಿಗೆ ಹೇಳಿದನು. ಅದಕ್ಕೆ ಆ ಮನುಷ್ಯರು ಬಹಳವಾಗಿ ಹೆದರಿದರು.</verse>
				<verse number="9">ಅಬೀಮೆಲೆಕನು ಅಬ್ರಹಾಮನನ್ನು ಕರೆದು ಅವನಿಗೆ, “ನೀನು ನಮಗೆ ಮಾಡಿದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಿನಗೆ ನಾನು ಏನು ಅಪರಾಧ ಮಾಡಿದ್ದೇನೆ? ನೀನು ನನಗೆ ಮಾಡಬಾರದ ಕೆಲಸಗಳನ್ನು ಮಾಡಿದ್ದೀಯೆ,” ಎಂದನು.</verse>
				<verse number="10">ಇದಲ್ಲದೆ ಅಬೀಮೆಲೆಕನು ಅಬ್ರಹಾಮನಿಗೆ, “ನೀನು ಹೀಗೆ ಮಾಡಿದ ಕಾರಣವೇನು?” ಎಂದು ವಿಚಾರಿಸಿದನು.</verse>
				<verse number="11">ಅದಕ್ಕೆ ಅಬ್ರಹಾಮನು, “ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ನೆನಸಿದೆನು.</verse>
				<verse number="12">ಇದಲ್ಲದೆ ನಿಜವಾಗಿಯೂ ಅವಳು ನನ್ನ ತಂಗಿ, ಆದರೆ ನನ್ನ ತಾಯಿಯ ಮಗಳಲ್ಲ, ನನ್ನ ತಂದೆಯ ಮಗಳೇ, ನನಗೆ ಹೆಂಡತಿಯಾದಳು.</verse>
				<verse number="13">ದೇವರು ನನ್ನ ತಂದೆಯ ಮನೆಯೊಳಗಿಂದ ನನ್ನನ್ನು ದೇಶಾಂತರಕ್ಕೆ ಕರೆದಾಗ, ನಾನು ಅವಳಿಗೆ, ನೀನು ನನಗೆ ತೋರಿಸತಕ್ಕ ದಯೆಯು ಯಾವುದೆಂದರೆ, ನಾವು ಹೋಗುವ ಪ್ರತಿಯೊಂದು ಸ್ಥಳದಲ್ಲಿ ನನ್ನ ವಿಷಯವಾಗಿ, ‘ಇವನು ನನ್ನ ಅಣ್ಣ,’ ಎಂದು ಹೇಳು ಎಂದು ತಿಳಿಸಿದೆನು,” ಎಂದನು.</verse>
				<verse number="14">ಆಗ ಅಬೀಮೆಲೆಕನು ಕುರಿಗಳನ್ನೂ ಎತ್ತುಗಳನ್ನೂ ದಾಸರನ್ನೂ ದಾಸಿಯರನ್ನೂ ತೆಗೆದುಕೊಂಡು ಅಬ್ರಹಾಮನಿಗೆ ಕೊಟ್ಟು, ಅವನ ಹೆಂಡತಿ ಸಾರಳನ್ನು ಅವನಿಗೆ ಒಪ್ಪಿಸಿಕೊಟ್ಟನು.</verse>
				<verse number="15">ಅಬೀಮೆಲೆಕನು, “ನನ್ನ ದೇಶವು ನಿನ್ನ ಮುಂದೆ ಇದೆ, ನಿನಗೆ ಇಷ್ಟವಾಗಿರುವ ಸ್ಥಳದಲ್ಲಿ ವಾಸಮಾಡು,” ಎಂದನು.</verse>
				<verse number="16">ಸಾರಳಿಗೆ, “ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿಯ ಹಣವನ್ನು ಕೊಟ್ಟಿದ್ದೇನೆ. ನೋಡು, ನಡೆದ ಘಟನೆಗೆ ಇದು ಪ್ರಾಯಶ್ಚಿತ್ತವಾಗಿದೆ. ನಿನ್ನ ಸಂಗಡ ಇರುವವರೆಲ್ಲರಿಗೂ ಉಳಿದವರೆಲ್ಲರಿಗೂ ನೀನು ನಿರ್ದೋಷಿಯೆಂದು ಇದು ಸಾಕ್ಷಿಯಾಗಿರಲಿ,” ಎಂದನು.</verse>
				<verse number="17">ಆಗ ಅಬ್ರಹಾಮನು ದೇವರಿಗೆ ಪ್ರಾರ್ಥನೆಮಾಡಿದನು. ದೇವರು ಅಬೀಮೆಲೆಕನನ್ನೂ, ಅವನ ಹೆಂಡತಿಯನ್ನೂ ದಾಸಿಯರನ್ನೂ ವಾಸಿಮಾಡಿದರು. ಆದ್ದರಿಂದ ಅವರಿಗೆ ಮಕ್ಕಳಾದರು.</verse>
				<verse number="18">ಏಕೆಂದರೆ ಯೆಹೋವ ದೇವರು ಅಬ್ರಹಾಮನ ಹೆಂಡತಿ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಮಹಿಳೆಯರನ್ನು ಬಂಜೆಯರನ್ನಾಗಿ ಮಾಡಿದ್ದರು.</verse>
			</chapter>
			<chapter number="21">
				<verse number="1">ಯೆಹೋವ ದೇವರು ಸಾರಳಿಗೆ ವಾಗ್ದಾನ ಮಾಡಿದಂತೆ ಆಕೆಗೆ ದಯೆತೋರಿಸಿದರು.</verse>
				<verse number="2">ದೇವರು ಅಬ್ರಹಾಮನಿಗೆ ಹೇಳಿದ ಸಮಯದಲ್ಲಿ ಅವನು ಮುದುಕನಾಗಿದ್ದಾಗ, ಸಾರಳು ಗರ್ಭಿಣಿಯಾಗಿ ಅವನಿಗೆ ಮಗನನ್ನು ಹೆತ್ತಳು.</verse>
				<verse number="3">ಅಬ್ರಹಾಮನು ತನಗೆ ಸಾರಳಲ್ಲಿ ಹುಟ್ಟಿದ ಮಗನಿಗೆ, ಇಸಾಕ, ಎಂದು ಹೆಸರಿಟ್ಟನು.</verse>
				<verse number="4">ದೇವರು ತನಗೆ ಅಪ್ಪಣೆಕೊಟ್ಟ ಹಾಗೆ ಅಬ್ರಹಾಮನು ತನ್ನ ಮಗ ಇಸಾಕನಿಗೆ ಎಂಟನೆಯ ದಿನದಲ್ಲಿ ಸುನ್ನತಿ ಮಾಡಿದನು.</verse>
				<verse number="5">ಅಬ್ರಹಾಮನ ಮಗ ಇಸಾಕನು ಜನಿಸಿದಾಗ ಅವನು ನೂರು ವರ್ಷದವನಾಗಿದ್ದನು.</verse>
				<verse number="6">ಆಗ ಸಾರಳು, “ದೇವರು ನನ್ನನ್ನು ನಗುವಂತೆ ಮಾಡಿದ್ದಾರೆ. ಹೀಗೆ ಕೇಳುವವರೆಲ್ಲರೂ ನನ್ನೊಂದಿಗೆ ನಗುವರು.</verse>
				<verse number="7">ಸಾರಳು ಮಕ್ಕಳಿಗೆ ಹಾಲು ಕುಡಿಸುವಳೆಂದು ಅಬ್ರಹಾಮನಿಗೆ ಯಾರು ಹೇಳುತ್ತಿದ್ದರು? ನಾನು ಅವನಿಗೆ ಮುದಿಪ್ರಾಯದಲ್ಲಿ ಮಗನನ್ನು ಹೆತ್ತೆನು,” ಎಂದಳು.</verse>
				<verse number="8">ಇಸಾಕನು ಬೆಳೆದು ಬಾಲಕನಾಗಿ ತಾಯಿಯ ಹಾಲು ಕುಡಿಯುವುದನ್ನು ಬಿಟ್ಟನು. ಆ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣ ಮಾಡಿಸಿದನು.</verse>
				<verse number="9">ಈಜಿಪ್ಟಿನವಳಾದ ಹಾಗರಳಿಗೆ ಅಬ್ರಹಾಮನಿಂದ ಜನಿಸಿದ ಮಗನು ಹಾಸ್ಯ ಮಾಡುವುದನ್ನು ಸಾರಳು ನೋಡಿ,</verse>
				<verse number="10">ಅಬ್ರಹಾಮನಿಗೆ, “ಈ ದಾಸಿಯನ್ನೂ, ಅವಳ ಮಗನನ್ನೂ ಹೊರಗೆ ಹಾಕು. ಈ ದಾಸಿಯ ಮಗನು ನನ್ನ ಮಗ ಇಸಾಕನ ಸಂಗಡ ಬಾಧ್ಯನಾಗಬಾರದು,” ಎಂದಳು.</verse>
				<verse number="11">ಅಬ್ರಹಾಮನಿಗೆ ತನ್ನ ಮಗನ ದೆಸೆಯಿಂದ ಬಹು ದುಃಖವಾಯಿತು.</verse>
				<verse number="12">ಆಗ ದೇವರು ಅಬ್ರಹಾಮನಿಗೆ, “ಹುಡುಗನಿಗಾಗಿಯೂ, ನಿನ್ನ ದಾಸಿಗಾಗಿಯೂ ನೀನು ಚಿಂತಿಸಬೇಡ. ಸಾರಳು ನಿನಗೆ ಹೇಳಿದ್ದೆಲ್ಲವನ್ನು ಕೇಳು. ಏಕೆಂದರೆ ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು.</verse>
				<verse number="13">ದಾಸಿಯ ಮಗನೂ ನಿನ್ನ ಸಂತಾನವಾಗಿರುವುದರಿಂದ, ಅವನನ್ನೂ ನಾನು ಜನಾಂಗವಾಗಿ ಮಾಡುವೆನು,” ಎಂದರು.</verse>
				<verse number="14">ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ, ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು, ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ, ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಮರುಭೂಮಿಯಲ್ಲಿ ಅಲೆದಾಡುತ್ತಿದ್ದಳು.</verse>
				<verse number="15">ತಿತ್ತಿಯೊಳಗಿನ ನೀರು ಮುಗಿದಾಗ, ಆಕೆ ಮಗುವನ್ನು ಒಂದು ಮರದ ಕೆಳಗೆ ಮಲಗಿಸಿ,</verse>
				<verse number="16">ಬಾಣವನ್ನೆಸೆಯುವಷ್ಟು ದೂರಹೋಗಿ ಕುಳಿತುಕೊಂಡು, “ಮಗುವಿನ ಸಾವನ್ನು ನಾನು ನೋಡಲಾರೆನು,” ಎಂದು ಹೇಳಿ ಸ್ವರವೆತ್ತಿ ಅತ್ತಳು.</verse>
				<verse number="17">ದೇವರು ಆ ಹುಡುಗನ ಅಳುವ ಸ್ವರವನ್ನು ಕೇಳಿದರು. ಆಗ ದೇವದೂತನು ಆಕಾಶದೊಳಗಿಂದ ಹಾಗರಳನ್ನು ಕರೆದು, ಆಕೆಗೆ, “ಹಾಗರಳೇ, ವ್ಯಥೆಪಡುವುದೇಕೆ? ಅಂಜಬೇಡ ದೇವರು ಹುಡುಗನ ಸ್ವರವನ್ನು ಕೇಳಿದ್ದಾರೆ.</verse>
				<verse number="18">ಎದ್ದು ಹುಡುಗನನ್ನು ಎತ್ತಿಕೊಂಡು ನಿನ್ನ ಕೈಯಲ್ಲಿ ತೆಗೆದುಕೋ. ನಾನು ಅವನನ್ನು ದೊಡ್ಡ ಜನಾಂಗದವನನ್ನಾಗಿ ಮಾಡುವೆನು,” ಎಂದನು.</verse>
				<verse number="19">ದೇವರು ಆಕೆಯ ಕಣ್ಣುಗಳನ್ನು ತೆರೆಯಲು, ಆಕೆಯು ನೀರಿನ ಬಾವಿಯನ್ನು ನೋಡಿದಳು. ಅಲ್ಲಿಗೆ ಹೋಗಿ ತಿತ್ತಿಯಲ್ಲಿ ನೀರನ್ನು ತುಂಬಿಸಿ, ಹುಡುಗನಿಗೆ ಕುಡಿಯಲು ಕೊಟ್ಟಳು.</verse>
				<verse number="20">ದೇವರು ಆ ಹುಡುಗನ ಸಂಗಡ ಇದ್ದರು. ಹುಡುಗನು ಬೆಳೆದು ಮರುಭೂಮಿಯಲ್ಲಿ ವಾಸಮಾಡಿ ಬಿಲ್ಲುಗಾರನಾದನು.</verse>
				<verse number="21">ಇಷ್ಮಾಯೇಲನು ಪಾರಾನಿನ ಮರುಭೂಮಿಯಲ್ಲಿ ವಾಸಮಾಡುತ್ತಿದ್ದಾಗ, ಅವನ ತಾಯಿಯು ಅವನಿಗೋಸ್ಕರ ಈಜಿಪ್ಟ್ ದೇಶದ ಒಬ್ಬ ಹೆಣ್ಣನ್ನು ತರಿಸಿ ಮದುವೆಮಾಡಿಸಿದಳು.</verse>
				<verse number="22">ಆ ಕಾಲದಲ್ಲಿ ಅಬೀಮೆಲೆಕನೂ, ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮನಿಗೆ, “ನೀನು ಮಾಡುವ ಎಲ್ಲಾ ಕೆಲಸಕಾರ್ಯಗಳಲ್ಲಿಯೂ ದೇವರು ನಿನ್ನ ಸಂಗಡ ಇದ್ದಾರೆ.</verse>
				<verse number="23">ಆದ್ದರಿಂದ ನೀನು ನನಗೂ, ನನ್ನ ಮಗನಿಗೂ, ನನ್ನ ಮೊಮ್ಮಗನಿಗೂ ವಂಚನೆ ಮಾಡುವುದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣಮಾಡು. ನಾನು ನಿನಗೆ ಒಳ್ಳೆಯದನ್ನೇ ಮಾಡಿದ ಪ್ರಕಾರ, ನೀನು ನನಗೂ, ನೀನು ವಾಸಮಾಡುತ್ತಿರುವ ಈ ದೇಶಕ್ಕೂ ಒಳ್ಳೆಯದನ್ನೇ ಮಾಡಬೇಕು,” ಎಂದನು.</verse>
				<verse number="24">ಅದಕ್ಕೆ ಅಬ್ರಹಾಮನು, “ನಾನು ಹಾಗೆಯೇ ಪ್ರಮಾಣ ಮಾಡುತ್ತೇನೆ,” ಎಂದನು.</verse>
				<verse number="25">ಅಬೀಮೆಲೆಕನ ಸೇವಕರು ಬಲಾತ್ಕಾರದಿಂದ ತೆಗೆದುಕೊಂಡ ನೀರಿನ ಬಾವಿಗಾಗಿ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಿದನು.</verse>
				<verse number="26">ಅದಕ್ಕೆ ಅಬೀಮೆಲೆಕನು, “ಈ ಕೆಲಸವನ್ನು ಯಾರು ಮಾಡಿದರೆಂದು ನಾನು ಅರಿಯೆ. ನೀನೂ ನನಗೆ ತಿಳಿಸಲಿಲ್ಲ. ನಾನು ಇಂದಿನವರೆಗೂ ಅದನ್ನು ಕೇಳಲೂ ಇಲ್ಲ,” ಎಂದನು.</verse>
				<verse number="27">ಆಗ ಅಬ್ರಹಾಮನು ಕುರಿಗಳನ್ನೂ, ಎತ್ತುಗಳನ್ನೂ ತೆಗೆದುಕೊಂಡು ಅಬೀಮೆಲೆಕನಿಗೆ ಕೊಟ್ಟನು. ಆಗ ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.</verse>
				<verse number="28">ಅಬ್ರಹಾಮನು ಹಿಂಡಿನಿಂದ ಏಳು ಹೆಣ್ಣು ಕುರಿಮರಿಗಳನ್ನು ಬೇರೆ ಮಾಡಿ ನಿಲ್ಲಿಸಿದನು.</verse>
				<verse number="29">ಅಬೀಮೆಲೆಕನು ಅಬ್ರಹಾಮನಿಗೆ, “ನೀನು ಆ ಏಳು ಹೆಣ್ಣು ಕುರಿಮರಿಗಳನ್ನು ಬೇರೆಯಾಗಿ ನಿಲ್ಲಿಸಿದ ಅರ್ಥ ಏನು?” ಎಂದನು.</verse>
				<verse number="30">ಅದಕ್ಕೆ ಅಬ್ರಹಾಮನು, “ನಾನೇ ಆ ಬಾವಿಯನ್ನು ಅಗೆದಿದ್ದೇನೆಂಬುದಕ್ಕೆ ಸಾಕ್ಷಿಯಾಗಿ ಆ ಏಳು ಹೆಣ್ಣು ಕುರಿಮರಿಗಳನ್ನು ನೀನು ನನ್ನ ಕೈಯಿಂದ ತೆಗೆದುಕೊಳ್ಳಬೇಕು,” ಎಂದನು.</verse>
				<verse number="31">ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣ ಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅಬ್ರಹಾಮನು ಹೆಸರಿಟ್ಟನು.</verse>
				<verse number="32">ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ, ಅವನ ಮುಖ್ಯ ಸೈನ್ಯಾಧಿಪತಿ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂದಿರುಗಿದರು.</verse>
				<verse number="33">ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲ ವೃಕ್ಷವನ್ನು ನೆಟ್ಟು, ಅಲ್ಲಿ ನಿತ್ಯ ದೇವರಾಗಿರುವ ಯೆಹೋವ ದೇವರ ಹೆಸರನ್ನು ಹೇಳಿ ಆರಾಧಿಸಿದನು.</verse>
				<verse number="34">ಅಬ್ರಹಾಮನು ಫಿಲಿಷ್ಟಿಯರ ದೇಶದಲ್ಲಿ ಬಹುಕಾಲ ತಂಗಿದ್ದನು.</verse>
			</chapter>
			<chapter number="22">
				<verse number="1">ಕೆಲವು ಕಾಲದ ನಂತರ, ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕಾಗಿ ಅವನಿಗೆ, “ಅಬ್ರಹಾಮನೇ,” ಎಂದು ಕರೆದರು. ಅದಕ್ಕವನು, “ಇಗೋ, ಇಲ್ಲಿದ್ದೇನೆ,” ಎಂದು ಉತ್ತರಕೊಟ್ಟನು.</verse>
				<verse number="2">ಆಗ ದೇವರು, “ನೀನು ಪ್ರೀತಿ ಮಾಡುವ ನಿನ್ನ ಒಬ್ಬನೇ ಮಗ ಇಸಾಕನನ್ನು ಈಗ ತೆಗೆದುಕೊಂಡು, ಮೊರೀಯಾ ದೇಶಕ್ಕೆ ಹೋಗಿ, ಅಲ್ಲಿ ನಾನು ನಿನಗೆ ಹೇಳುವ ಒಂದು ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು,” ಎಂದರು.</verse>
				<verse number="3">ಅಬ್ರಹಾಮನು ಬೆಳಿಗ್ಗೆ ಎದ್ದು, ತನ್ನ ಕತ್ತೆಗೆ ತಡಿ ಕಟ್ಟಿ, ತನ್ನ ಸೇವಕರಲ್ಲಿ ಇಬ್ಬರನ್ನೂ, ತನ್ನ ಮಗ ಇಸಾಕನನ್ನೂ, ದಹನಬಲಿಗಳಿಗಾಗಿ ಕಟ್ಟಿಗೆಗಳನ್ನೂ ತೆಗೆದುಕೊಂಡು, ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.</verse>
				<verse number="4">ಮೂರನೆಯ ದಿನ ಅಬ್ರಹಾಮನು ಕಣ್ಣೆತ್ತಿ ನೋಡಿದಾಗ, ಆ ಸ್ಥಳವು ದೂರದಲ್ಲಿ ಕಾಣಿಸಿತು.</verse>
				<verse number="5">ಅಬ್ರಹಾಮನು ತನ್ನ ಸೇವಕರಿಗೆ, “ಕತ್ತೆಯ ಸಂಗಡ ಇಲ್ಲಿಯೇ ಇರಿ. ನಾನೂ, ಹುಡುಗನೂ ಅಲ್ಲಿಗೆ ಹೋಗಿ, ಆರಾಧನೆ ಮಾಡಿ, ನಿಮ್ಮ ಬಳಿಗೆ ಹಿಂದಿರುಗಿ ಬರುತ್ತೇವೆ,” ಎಂದನು.</verse>
				<verse number="6">ಅಬ್ರಹಾಮನು ದಹನಬಲಿಗಳ ಕಟ್ಟಿಗೆಗಳನ್ನು ತೆಗೆದುಕೊಂಡು, ತನ್ನ ಮಗ ಇಸಾಕನ ಮೇಲೆ ಹೊರಿಸಿ; ಬೆಂಕಿಯನ್ನೂ, ಕತ್ತಿಯನ್ನೂ ತನ್ನ ಕೈಯಲ್ಲಿ ತೆಗೆದುಕೊಂಡನು. ಅವರಿಬ್ಬರೂ ಹೊರಟು ಹೋದರು.</verse>
				<verse number="7">ಇಸಾಕನು ತನ್ನ ತಂದೆ ಅಬ್ರಹಾಮನಿಗೆ, “ಅಪ್ಪಾ,” ಎಂದನು. ಆಗ ಅಬ್ರಹಾಮನು, “ಏನು ಮಗನೇ?” ಎಂದನು. ಅದಕ್ಕೆ ಅವನು, “ಇಗೋ, ಬೆಂಕಿಯೂ, ಕಟ್ಟಿಗೆಯೂ ಇವೆ, ಆದರೆ ದಹನಬಲಿಗೋಸ್ಕರ ಕುರಿಮರಿಯು ಎಲ್ಲಿ?” ಎಂದನು.</verse>
				<verse number="8">ಅಬ್ರಹಾಮನು, “ನನ್ನ ಮಗನೇ, ದೇವರೇ ದಹನಬಲಿಗೋಸ್ಕರ ಕುರಿಮರಿಯನ್ನು ಒದಗಿಸುವರು,” ಎಂದು ಉತ್ತರಕೊಟ್ಟನು. ಹೀಗೆ ಅವರಿಬ್ಬರೂ ಜೊತೆಯಲ್ಲಿ ಹೋದರು.</verse>
				<verse number="9">ದೇವರು ಅವನಿಗೆ ಹೇಳಿದ ಸ್ಥಳಕ್ಕೆ ಬಂದಾಗ, ಅಬ್ರಹಾಮನು ಅಲ್ಲಿ ಬಲಿಪೀಠವನ್ನು ಕಟ್ಟಿ, ಕಟ್ಟಿಗೆಗಳನ್ನು ಅದರ ಮೇಲೆ ಕ್ರಮವಾಗಿ ಜೋಡಿಸಿ, ತನ್ನ ಮಗ ಇಸಾಕನನ್ನು ಕಟ್ಟಿ, ಬಲಿಪೀಠದ ಮೇಲೆ ಇದ್ದ ಕಟ್ಟಿಗೆಗಳ ಮೇಲೆ ಇಟ್ಟನು.</verse>
				<verse number="10">ಅಬ್ರಹಾಮನು ಕೈಚಾಚಿ ತನ್ನ ಮಗನನ್ನು ಕೊಲ್ಲುವುದಕ್ಕೆ ಕತ್ತಿ ತೆಗೆದುಕೊಂಡನು.</verse>
				<verse number="11">ಆಗ ಯೆಹೋವ ದೇವರ ದೂತನು ಆಕಾಶದೊಳಗಿಂದ, “ಅಬ್ರಹಾಮನೇ, ಅಬ್ರಹಾಮನೇ,” ಎಂದು ಅವನನ್ನು ಕರೆದನು. ಅವನು, “ಇಲ್ಲಿ ಇದ್ದೇನೆ,” ಎಂದನು.</verse>
				<verse number="12">ಯೆಹೋವ ದೇವರ ದೂತನು ಅಬ್ರಹಾಮನಿಗೆ, “ಹುಡುಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ; ಏಕೆಂದರೆ ನೀನು ದೇವರಿಗೆ ಭಯಪಡುತ್ತೀ ಎಂದು ಈಗ ನಾನು ತಿಳಿದಿದ್ದೇನೆ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವುದಕ್ಕೆ ಹಿಂಜರಿಯಲಿಲ್ಲ,” ಎಂದು ಹೇಳಿದನು.</verse>
				<verse number="13">ಅಬ್ರಹಾಮನು ಕಣ್ಣೆತ್ತಿ ನೋಡಿದಾಗ, ಅವನ ಹಿಂದೆ ಒಂದು ಟಗರು ಕೊಂಬುಗಳಿಂದ ಪೊದೆಯಲ್ಲಿ ಸಿಕ್ಕಿಕೊಂಡಿತ್ತು. ಅಬ್ರಹಾಮನು ಹೋಗಿ ಆ ಟಗರನ್ನು ತೆಗೆದುಕೊಂಡು, ಅದನ್ನು ತನ್ನ ಮಗನಿಗೆ ಬದಲಾಗಿ ದಹನಬಲಿಯಾಗಿ ಅರ್ಪಿಸಿದನು.</verse>
				<verse number="14">ಅಬ್ರಹಾಮನು ಆ ಸ್ಥಳಕ್ಕೆ ಯೆಹೋವ ಯೀರೆ ಎಂದು ಹೆಸರಿಟ್ಟನು. “ಯೆಹೋವ ದೇವರು ಪರ್ವತದ ಮೇಲೆ ಒದಗಿಸುವರು,” ಎಂದು ಇಂದಿನವರೆಗೂ ಜನರು ಹೇಳುತ್ತಾರೆ.</verse>
				<verse number="15">ಯೆಹೋವ ದೇವರ ದೂತನು ಆಕಾಶದೊಳಗಿಂದ ಎರಡನೆಯ ಸಾರಿ ಅಬ್ರಹಾಮನನ್ನು ಕರೆದು ಅವನಿಗೆ,</verse>
				<verse number="16">“ನೀನು ಈ ಕಾರ್ಯವನ್ನು ಮಾಡಿ, ನಿನ್ನ ಒಬ್ಬನೇ ಮಗನನ್ನು ಸಹ ನನಗೆ ಕೊಡುವುದಕ್ಕೆ ಹಿಂಜರಿಯದೆ ಇದ್ದುದರಿಂದ, ಯೆಹೋವ ದೇವರಾದ ನಾನು ನಿನಗೆ ಪ್ರಮಾಣವಾಗಿ ಹೇಳುವುದೇನಂದರೆ,</verse>
				<verse number="17">ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು. ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸುವೆನು. ನಿನ್ನ ಸಂತಾನದವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.</verse>
				<verse number="18">ನೀನು ನನಗೆ ವಿಧೇಯನಾದದ್ದರಿಂದ, ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂದರು.</verse>
				<verse number="19">ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂದಿರುಗಿ ಬಂದನು. ಅವರೆಲ್ಲರೂ ಬೇರ್ಷೆಬಕ್ಕೆ ಹೋದರು. ಅಬ್ರಹಾಮನು ಬೇರ್ಷೆಬದಲ್ಲಿ ವಾಸಿಸಿದನು.</verse>
				<verse number="20">ಕೆಲ ಸಮಯದ ನಂತರ ಕೆಲವರು ಅಬ್ರಹಾಮನಿಗೆ, “ಮಿಲ್ಕಾಳು ತಾಯಾಗಿದ್ದಾಳೆ. ನಿನ್ನ ಸಹೋದರ ನಾಹೋರನಿಗೆ ಅವಳು ಮಕ್ಕಳನ್ನು ಹೆತ್ತಿದ್ದಾಳೆ,” ಎಂದು ತಿಳಿಸಿದರು.</verse>
				<verse number="21">ಅವರು ಯಾರೆಂದರೆ, ಅವನ ಚೊಚ್ಚಲು ಮಗ ಊಚ್, ಅವನ ಸಹೋದರ ಬೂಜ್, ಅರಾಮನ ತಂದೆ ಕೆಮೂಯೇಲ್,</verse>
				<verse number="22">ಕೆಸೆದ್, ಹಜೋ, ಪಿಲ್ದಾಷ್, ಇದ್ಲಾಫ್, ಬೆತೂಯೇಲ್.</verse>
				<verse number="23">ಬೆತೂಯೇಲನಿಂದ ರೆಬೆಕ್ಕಳು ಹುಟ್ಟಿದಳು. ಈ ಎಂಟು ಮಂದಿಯನ್ನು ಮಿಲ್ಕಾಳು ಅಬ್ರಹಾಮನ ಸಹೋದರ ನಾಹೋರನಿಗೆ ಹೆತ್ತಳು.</verse>
				<verse number="24">ಅವನ ಉಪಪತ್ನಿ ರೂಮಳೆಂಬವಳು ಸಹ ಟೆಬಹ, ಗಹಮ, ತಹಷ, ಮಾಕಾ ಎಂಬುವರನ್ನು ಹೆತ್ತಳು.</verse>
			</chapter>
			<chapter number="23">
				<verse number="1">ಸಾರಳು ನೂರಿಪ್ಪತ್ತೇಳು ವರ್ಷ ಬದುಕಿದ್ದಳು.</verse>
				<verse number="2">ಅವಳು ಕಾನಾನ್ ದೇಶದಲ್ಲಿರುವ ಹೆಬ್ರೋನಿನಲ್ಲಿ ಅಂದರೆ ಕಿರ್ಯತ್ ಅರ್ಬದಲ್ಲಿ ಮರಣಹೊಂದಿದಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡಿದನು.</verse>
				<verse number="3">ಆಗ ಅಬ್ರಹಾಮನು ತನ್ನ ಹೆಂಡತಿಯ ಶವದ ಬಳಿಯಿಂದ ಎದ್ದು, ಹಿತ್ತಿಯರ ಬಳಿಗೆ ಬಂದು, ಅವರಿಗೆ,</verse>
				<verse number="4">“ನಾನು ನಿಮ್ಮೊಂದಿಗೆ ಪರದೇಶಸ್ಥನೂ, ಪರವಾಸಿಯೂ ಆಗಿದ್ದೇನೆ. ನನಗೆ ನಿಮ್ಮ ಬಳಿಯಲ್ಲಿ ಸಮಾಧಿಯ ಸ್ಥಳವನ್ನು ಕೊಡಿರಿ. ಆಗ ನನ್ನ ಹೆಂಡತಿಯ ಶವವನ್ನು ಹೂಳಿಡುವೆನು,” ಎಂದನು.</verse>
				<verse number="5">ಹಿತ್ತಿಯರು ಅಬ್ರಹಾಮನಿಗೆ ಉತ್ತರಕೊಟ್ಟು,</verse>
				<verse number="6">“ಒಡೆಯಾ, ನಮ್ಮ ಮಾತನ್ನು ಕೇಳು, ನೀನು ನಮ್ಮ ಮಧ್ಯದಲ್ಲಿ ಮಹಾಪ್ರಭುವಾಗಿದ್ದೀ. ನಮ್ಮ ಸಮಾಧಿಗಳೊಳಗೆ ಉತ್ತಮವಾದದ್ದರಲ್ಲಿ ನಿನ್ನ ಹೆಂಡತಿಯ ಶವವನ್ನು ಹೂಳಿಡು. ನಮ್ಮಲ್ಲಿ ಯಾರೂ ನಿನಗೆ ಸಮಾಧಿಯನ್ನು ಕೊಡುವುದಿಲ್ಲ ಎಂದು ಹೇಳಲಾರರು,” ಎಂದರು.</verse>
				<verse number="7">ಆಗ ಅಬ್ರಹಾಮನು ಎದ್ದು, ಆ ದೇಶದ ಜನರಾದ ಹಿತ್ತಿಯರ ಮುಂದೆ ತಲೆಬಾಗಿ,</verse>
				<verse number="8">ಅವರ ಸಂಗಡ ಮಾತನಾಡಿ, “ನಾನು ನನ್ನ ಹೆಂಡತಿಯ ಶವವನ್ನು ಹೂಳಿಡುವುದು ನಿಮ್ಮ ಮನಸ್ಸಿಗೆ ಸರಿಬಿದ್ದರೆ, ನನ್ನ ಮಾತು ಕೇಳಿ ಚೋಹರನ ಮಗ ಎಫ್ರೋನನನ್ನು ನನಗಾಗಿ ಬೇಡಿಕೊಳ್ಳಿರಿ.</verse>
				<verse number="9">ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲಾ ಗವಿಯನ್ನು ನನಗೆ ಕೊಡಲಿ. ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ,” ಎಂದನು.</verse>
				<verse number="10">ಆಗ ಅವರ ಮಧ್ಯದಲ್ಲಿ ಕುಳಿತುಕೊಂಡಿದ್ದ ಹಿತ್ತಿಯನಾದ ಎಫ್ರೋನನು ಪಟ್ಟಣದ ದ್ವಾರದ ಬಳಿಯಲ್ಲಿ ಕೂತಿದ್ದ ಎಲ್ಲಾ ಹಿತ್ತಿಯರು ಕೇಳುವಂತೆ ಅಬ್ರಹಾಮನಿಗೆ,</verse>
				<verse number="11">“ಒಡೆಯನೇ ಹಾಗಲ್ಲ, ನನ್ನ ಮಾತನ್ನು ಕೇಳು. ಆ ಹೊಲವನ್ನು ನಿನಗೆ ಕೊಡುತ್ತೇನೆ. ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ. ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ. ನಿನ್ನ ಹೆಂಡತಿಯ ಶವವನ್ನು ಹೂಳಿಡು,” ಎಂದನು.</verse>
				<verse number="12">ಆಗ ಅಬ್ರಹಾಮನು ದೇಶದ ಜನರ ಮುಂದೆ ತಲೆಬಾಗಿ,</verse>
				<verse number="13">ದೇಶದ ಜನರು ಕೇಳುವಂತೆ ಎಫ್ರೋನನಿಗೆ, “ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು. ನಾನು ಹೊಲದ ಕ್ರಯವನ್ನು ಕೊಡುತ್ತೇನೆ. ಅದನ್ನು ನನ್ನಿಂದ ತೆಗೆದುಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಳಿಡುವೆನು,” ಎಂದನು.</verse>
				<verse number="14">ಎಫ್ರೋನನು ಅಬ್ರಹಾಮನಿಗೆ ಉತ್ತರವಾಗಿ,</verse>
				<verse number="15">“ನನ್ನ ಒಡೆಯನೇ, ನನ್ನ ಮಾತನ್ನು ಕೇಳು. ಆ ಭೂಮಿಯು ನಾನೂರು ಬೆಳ್ಳಿಯ ನಾಣ್ಯಗಳ ಬೆಲೆಯುಳ್ಳದ್ದು, ಈ ಕುರಿತು ನಮ್ಮೊಳಗೇ ವಾದವೇಕೆ? ನಿನ್ನ ಹೆಂಡತಿಯ ಶವವನ್ನು ಹೂಳಿಡು,” ಎಂದನು.</verse>
				<verse number="16">ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿಕೊಂಡು, ಎಫ್ರೋನನು ಹಿತ್ತಿಯರ ಎದುರಿನಲ್ಲಿ ಹೇಳಿದ ಬೆಲೆ ಅಂದರೆ, ವರ್ತಕರಲ್ಲಿ ನಡೆಯುವ ನಾನೂರು ಬೆಳ್ಳಿ ನಾಣ್ಯಗಳನ್ನು ತೂಕಮಾಡಿ ಅವನಿಗೆ ಕೊಟ್ಟನು.</verse>
				<verse number="17">ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋನನ ಹೊಲವೂ, ಆ ಹೊಲದಲ್ಲಿರುವ ಗವಿಯೂ, ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ,</verse>
				<verse number="18">ಹಿತ್ತಿಯರ ಮುಂದೆಯೂ, ಅವರ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ದೃಢವಾಯಿತು.</verse>
				<verse number="19">ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಸಾರಳನ್ನು ಕಾನಾನ್ ದೇಶದಲ್ಲಿ ಹೆಬ್ರೋನ್ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಳಿಟ್ಟನು.</verse>
				<verse number="20">ಆ ಹೊಲವೂ, ಅದರಲ್ಲಿರುವ ಗವಿಯೂ ಹಿತ್ತಿಯರಿಂದ ಅಬ್ರಹಾಮನಿಗೆ ಸ್ವಂತ ಸಮಾಧಿ ಎಂದು ಸ್ಥಿರವಾಯಿತು.</verse>
			</chapter>
			<chapter number="24">
				<verse number="1">ಅಬ್ರಹಾಮನು ವೃದ್ಧನಾಗಿದ್ದನು. ಯೆಹೋವ ದೇವರು ಅಬ್ರಹಾಮನನ್ನು ಎಲ್ಲಾದರಲ್ಲಿಯೂ ಆಶೀರ್ವದಿಸಿದ್ದರು.</verse>
				<verse number="2">ಅಬ್ರಹಾಮನು ತನಗೆ ಇದ್ದವುಗಳ ಮೇಲೆಲ್ಲಾ ಆಡಳಿತ ಮಾಡುವ ತನ್ನ ಮನೆಯ ಹಿರಿಯ ಸೇವಕನಿಗೆ, “ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಡು,</verse>
				<verse number="3">ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಪುತ್ರಿಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳಬಾರದು.</verse>
				<verse number="4">ನನ್ನ ದೇಶಕ್ಕೂ, ಬಂಧುಗಳ ಬಳಿಗೂ ಹೋಗಿ ನನ್ನ ಮಗ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಂಡು ಬರುತ್ತೇನೆಂದು ಪರಲೋಕದ ಮತ್ತು ಭೂಲೋಕದ ದೇವರಾಗಿರುವ ಯೆಹೋವ ದೇವರ ಮೇಲೆ ನೀನು ನನಗೆ ಪ್ರಮಾಣಮಾಡಬೇಕು,” ಎಂದನು.</verse>
				<verse number="5">ಆ ಸೇವಕನು ಅವನಿಗೆ, “ಒಂದು ವೇಳೆ ನನ್ನನ್ನು ಹಿಂಬಾಲಿಸಿ, ಈ ದೇಶಕ್ಕೆ ಬರಲು ಆ ಸ್ತ್ರೀಗೆ ಮನಸ್ಸಿಲ್ಲದೆ ಹೋದರೆ, ನೀನು ಬಿಟ್ಟುಬಂದ ದೇಶಕ್ಕೆ ನಿನ್ನ ಮಗನನ್ನು ತಿರುಗಿ ಕರೆದುಕೊಂಡು ಹೋಗಬೇಕೋ?” ಎಂದನು.</verse>
				<verse number="6">ಅಬ್ರಹಾಮನು ಅವನಿಗೆ, “ನನ್ನ ಮಗನನ್ನು ತಿರುಗಿ ಅಲ್ಲಿಗೆ ಕರೆದುಕೊಂಡು ಹೋಗಬಾರದು,</verse>
				<verse number="7">ನನ್ನ ತಂದೆಯ ಮನೆಯಿಂದಲೂ ಬಂಧುಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು, ನನ್ನ ಸಂಗಡ ಮಾತನಾಡಿ, ‘ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು,’ ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಯೆಹೋವ ದೇವರು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ, ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸುವರು.</verse>
				<verse number="8">ಆದರೆ ನಿನ್ನನ್ನು ಹಿಂಬಾಲಿಸಿ ಬರುವುದಕ್ಕೆ ಆ ಸ್ತ್ರೀಗೆ ಮನಸ್ಸಿಲ್ಲದಿದ್ದರೆ, ನನಗೆ ಮಾಡಿದ ಆ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವೆ. ಆದರೆ ನನ್ನ ಮಗನನ್ನು ಅಲ್ಲಿಗೆ ಮಾತ್ರ ತಿರುಗಿ ಕರೆದುಕೊಂಡು ಹೋಗಬಾರದು,” ಎಂದನು.</verse>
				<verse number="9">ಆಗ ಆ ಸೇವಕನು ತನ್ನ ಕೈಯನ್ನು ತನ್ನ ಯಜಮಾನನಾದ ಅಬ್ರಹಾಮನ ತೊಡೆಯ ಕೆಳಗೆ ಇಟ್ಟು, ಆ ವಿಷಯ ಬಗ್ಗೆ ಅವನಿಗೆ ಪ್ರಮಾಣ ಮಾಡಿದನು.</verse>
				<verse number="10">ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನೂ, ತನ್ನ ಯಜಮಾನನಿಂದ ಎಲ್ಲಾ ತರಹದ ವಸ್ತ್ರಗಳನ್ನೂ ತೆಗೆದುಕೊಂಡು ಅರಾಮ್ ನಹರೈಮಿಗೆ ಹೊರಟು, ನಾಹೋರನು ವಾಸವಾಗಿದ್ದ ಊರನ್ನು ಸೇರಿದನು.</verse>
				<verse number="11">ಆಗ ಸ್ತ್ರೀಯರು ನೀರು ತರಲು ಬರುವ ಸಂಜೆಯ ಸಮಯವಾಗಿತ್ತು. ಅವನು ಪಟ್ಟಣದ ಹೊರಗೆ ನೀರಿನ ಬಾವಿಯ ಬಳಿಯಲ್ಲಿ ಒಂಟೆಗಳನ್ನು ಮಲಗಿಸಿದನು.</verse>
				<verse number="12">ಆಗ ಅವನು, “ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಯೆಹೋವ ದೇವರೇ, ಈ ಹೊತ್ತು ನನಗೆ ಅನುಕೂಲವನ್ನು ಉಂಟುಮಾಡಿ, ನನ್ನ ಯಜಮಾನನಾದ ಅಬ್ರಹಾಮನಿಗೆ ದಯೆ ತೋರಿಸಿರಿ.</verse>
				<verse number="13">ನಾನು ನೀರಿನ ಬಾವಿಯ ಬಳಿಯಲ್ಲಿ ನಿಂತುಕೊಂಡಿದ್ದೇನೆ. ಊರಿನ ಜನರ ಪುತ್ರಿಯರು ನೀರು ಸೇದುವುದಕ್ಕೆ ಹೊರಗೆ ಬರುತ್ತಾರೆ.</verse>
				<verse number="14">ನಾನು ಯಾವ ಹುಡುಗಿಗೆ, ‘ನೀರು ಕುಡಿಯುವ ಹಾಗೆ ನಿನ್ನ ಕೊಡವನ್ನು ಇಳಿಸು,’ ಎಂದು ಕೇಳಿಕೊಂಡಾಗ, ‘ನೀನೂ ಕುಡಿ, ನಿನ್ನ ಒಂಟೆಗಳಿಗೆ ಸಹ ಕುಡಿಯುವುದಕ್ಕೆ ಕೊಡುತ್ತೇನೆ,’ ಎಂದು ಹೇಳುವಳೋ, ಆಕೆಯನ್ನೇ ನೀವು ನಿಮ್ಮ ಸೇವಕನಾದ ಇಸಾಕನಿಗೆ ನೇಮಕ ಮಾಡಿದ್ದೀರಿ ಮತ್ತು ಯಜಮಾನನಿಗೆ ದಯೆ ತೋರಿಸಿದ್ದೀರಿ, ಎಂದು ಇದರಿಂದ ನಾನು ತಿಳಿದುಕೊಳ್ಳುವೆನು,” ಎಂದು ಬೇಡಿಕೊಂಡನು.</verse>
				<verse number="15">ಅವನು ಹಾಗೆ ಹೇಳುವುದನ್ನು ಮುಗಿಸುವುದಕ್ಕಿಂತ ಮುಂಚೆ ಅಬ್ರಹಾಮನ ಸಹೋದರನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಾಳ ಮಗ ಬೆತೂಯೇಲನಿಗೆ ಹುಟ್ಟಿದ ರೆಬೆಕ್ಕಳು ತನ್ನ ಕೊಡವನ್ನು ಹೆಗಲಿನ ಮೇಲೆ ಇಟ್ಟುಕೊಂಡು ಹೊರಗೆ ಬಂದಳು.</verse>
				<verse number="16">ಆ ಹುಡುಗಿಯು ನೋಡುವುದಕ್ಕೆ ಬಹು ಸುಂದರಿಯಾಗಿದ್ದಳು, ಮದುವೆಯಾಗದ ಕನ್ನಿಕೆಯಾಗಿದ್ದಳು. ಆಕೆಯು ಬಾವಿಯ ಬಳಿಗೆ ಹೋಗಿ, ತನ್ನ ಕೊಡವನ್ನು ತುಂಬಿಕೊಂಡು ಬಂದಳು.</verse>
				<verse number="17">ಆಗ ಸೇವಕನು ಅವಳೆದುರಿಗೆ ಓಡಿಹೋಗಿ, “ನಿನ್ನ ಕೊಡದೊಳಗಿಂದ ಸ್ವಲ್ಪ ನೀರು ನನಗೆ ಕುಡಿಯುವುದಕ್ಕೆ ಕೊಡು,” ಎಂದು ಕೇಳಿಕೊಂಡನು.</verse>
				<verse number="18">ಅದಕ್ಕವಳು, “ನನ್ನ ಒಡೆಯನೇ, ಕುಡಿ,” ಎಂದು ಹೇಳಿ, ತ್ವರೆಯಾಗಿ ತನ್ನ ಕೊಡವನ್ನು ಕೈಯಿಂದ ಇಳಿಸಿ, ಅವನಿಗೆ ಕುಡಿಯಲು ಕೊಟ್ಟಳು.</verse>
				<verse number="19">ಅವನಿಗೆ ಕುಡಿಯುವುದಕ್ಕೆ ಕೊಟ್ಟನಂತರ ಆಕೆಯು, “ನಿನ್ನ ಒಂಟೆಗಳಿಗೂ ಸಾಕಾಗುವಷ್ಟು ನೀರನ್ನು ಸೇದುತ್ತೇನೆ,” ಎಂದು ಹೇಳಿದಳು.</verse>
				<verse number="20">ಆಕೆಯು ತ್ವರೆಪಟ್ಟು ತನ್ನ ಕೊಡದಲ್ಲಿದ್ದ ನೀರನ್ನು ತೊಟ್ಟಿಯಲ್ಲಿ ಹೊಯ್ದು, ತಿರುಗಿ ಸೇದುವುದಕ್ಕೆ ಬಾವಿಯ ಬಳಿಗೆ ಓಡಿ, ಅವನ ಎಲ್ಲಾ ಒಂಟೆಗಳಿಗೋಸ್ಕರ ನೀರನ್ನು ಸೇದಿದಳು.</verse>
				<verse number="21">ಆಗ ಯೆಹೋವ ದೇವರು ತನ್ನ ಪ್ರಯಾಣನ್ನು ಸಫಲ ಮಾಡಿದರೋ ಏನೋ, ಎಂದು ತಿಳಿದುಕೊಳ್ಳುವುದಕ್ಕೆ ಆ ಮನುಷ್ಯನು ಆಕೆಯನ್ನು ಗಮನಿಸುತ್ತಾ, ಆಶ್ಚರ್ಯಪಟ್ಟು ಮೌನವಾಗಿದ್ದನು.</verse>
				<verse number="22">ಒಂಟೆಗಳು ನೀರು ಕುಡಿದಾದ ಮೇಲೆ, ಆ ಮನುಷ್ಯನು ಅರ್ಧ ತೊಲೆಯ ತೂಕದ ಚಿನ್ನದ ಮೂಗುತಿಯನ್ನು, ಹತ್ತು ತೊಲೆ ತೂಕದ ಎರಡು ಬಳೆಗಳನ್ನು ಆಕೆಗೆ ಕೊಟ್ಟನು.</verse>
				<verse number="23">ಅನಂತರ, “ನೀನು ಯಾರ ಮಗಳು? ನನಗೆ ಹೇಳು. ನಿನ್ನ ತಂದೆಯ ಮನೆಯಲ್ಲಿ ಒಂದು ರಾತ್ರಿ ಕಳೆಯುವುದಕ್ಕೆ ನಮಗೆ ಸ್ಥಳವಿದೆಯೋ?” ಕೇಳಿದನು.</verse>
				<verse number="24">ಅದಕ್ಕೆ ಆಕೆಯು, “ನಾಹೋರನಿಗೆ ಮಿಲ್ಕಾಳು ಹೆತ್ತ ಬೆತೂಯೇಲನ ಮಗಳು,” ಎಂದಳು.</verse>
				<verse number="25">ಇದಲ್ಲದೆ ಆಕೆಯು ಅವನಿಗೆ, “ಹುಲ್ಲೂ, ಮೇವೂ ನಮ್ಮಲ್ಲಿ ಸಾಕಷ್ಟು ಇವೆ, ನೀವು ಒಂದು ರಾತ್ರಿ ಕಳೆಯುವುದಕ್ಕೆ ಸ್ಥಳವಿದೆ,” ಎಂದು ಅವನಿಗೆ ಹೇಳಿದಳು.</verse>
				<verse number="26">ಆಗ ಆ ಮನುಷ್ಯನು ತಲೆಬಾಗಿ ಯೆಹೋವ ದೇವರಿಗೆ ಅಡ್ಡಬಿದ್ದು ಆರಾಧಿಸಿದನು.</verse>
				<verse number="27">ಇದಲ್ಲದೆ ಅವನು, “ನನ್ನ ಯಜಮಾನನಾದ ಅಬ್ರಹಾಮನ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ. ಅವರು ನನ್ನ ಯಜಮಾನನನ್ನು ಕೈಬಿಡದೆ, ತಮ್ಮ ದಯೆಯನ್ನೂ, ನಂಬಿಗಸ್ತಿಕೆಯನ್ನೂ ತೋರಿಸಿದ್ದಾರೆ. ನಾನು ಮಾರ್ಗದಲ್ಲಿರುವಾಗ ಯೆಹೋವ ದೇವರು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೇ ನಡೆಸಿದ್ದಾರೆ,” ಎಂದನು.</verse>
				<verse number="28">ಆಗ ಆ ಹುಡುಗಿಯು ಓಡಿಹೋಗಿ ಈ ವಿಷಯಗಳನ್ನು ತನ್ನ ತಾಯಿಯ ಮನೆಯಲ್ಲಿದ್ದವರಿಗೆ ತಿಳಿಸಿದಳು.</verse>
				<verse number="29">ರೆಬೆಕ್ಕಳಿಗೆ ಲಾಬಾನನೆಂಬ ಸಹೋದರನಿದ್ದನು. ಬಾವಿಯ ಬಳಿಯಲ್ಲಿದ್ದ ಆ ಮನುಷ್ಯನ ಬಳಿಗೆ ಲಾಬಾನನು ಓಡಿದನು.</verse>
				<verse number="30">ಅವನು ಮೂಗುತಿಯನ್ನೂ, ತನ್ನ ಸಹೋದರಿಯ ಕೈಗಳಲ್ಲಿದ್ದ ಬಳೆಗಳನ್ನೂ ಕಂಡು, ಆ ಮನುಷ್ಯನು ತನ್ನ ಬಳಿ ಹೀಗೆ ಮಾತನಾಡಿದನೆಂದು ಹೇಳಿದ ತನ್ನ ಸಹೋದರಿ ರೆಬೆಕ್ಕಳ ಮಾತುಗಳನ್ನು ಕೇಳಿ, ಆ ಮನುಷ್ಯನ ಬಳಿಗೆ ಬಂದನು. ಅವನು ಇನ್ನೂ ಬಾವಿಯ ಬಳಿಯಲ್ಲಿ ಒಂಟೆಗಳ ಹತ್ತಿರ ನಿಂತಿದ್ದನು.</verse>
				<verse number="31">ಲಾಬಾನನು ಅವನಿಗೆ, “ಯೆಹೋವ ದೇವರಿಂದ ಆಶೀರ್ವಾದ ಪಡೆದವನೇ, ಒಳಗೆ ಬಾ, ಏಕೆ ಹೊರಗೆ ನಿಂತಿರುವೆ? ನಾನು ಮನೆಯನ್ನೂ, ಒಂಟೆಗಳಿಗೆ ಸ್ಥಳವನ್ನೂ ಸಿದ್ಧಮಾಡಿದ್ದೇನೆ,” ಎಂದನು.</verse>
				<verse number="32">ಆಗ ಆ ಮನುಷ್ಯನು ಮನೆಗೆ ಬಂದನು. ಅವನು ಒಂಟೆಗಳನ್ನು ಬಿಚ್ಚಿ, ಅವುಗಳಿಗೆ ಹುಲ್ಲನ್ನೂ, ಮೇವನ್ನೂ ಕೊಟ್ಟನು. ಅವನ ಕಾಲುಗಳನ್ನೂ, ಅವನ ಸಂಗಡ ಇದ್ದ ಮನುಷ್ಯರ ಕಾಲುಗಳನ್ನೂ ತೊಳೆಯುವುದಕ್ಕೆ ನೀರನ್ನು ಕೊಟ್ಟನು.</verse>
				<verse number="33">ಅವನಿಗೆ ಊಟಕ್ಕೆ ಬಡಿಸಿದಾಗ, ಅವನು, “ನಾನು ಬಂದ ಕೆಲಸದ ವಿಷಯ ಹೇಳದೆ ಊಟಮಾಡುವುದಿಲ್ಲ,” ಎಂದನು. ಅದಕ್ಕೆ ಲಾಬಾನನು, “ಹೇಳು,” ಎಂದನು.</verse>
				<verse number="34">ಅವನು, “ನಾನು ಅಬ್ರಹಾಮನ ಸೇವಕನು.</verse>
				<verse number="35">ಯೆಹೋವ ದೇವರು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ಧನವಂತನಾದನು. ದೇವರು ಅವನಿಗೆ ಕುರಿದನ, ಬೆಳ್ಳಿಬಂಗಾರ, ದಾಸದಾಸಿ, ಒಂಟೆಗಳು ಮತ್ತು ಕತ್ತೆಗಳನ್ನು ಕೊಟ್ಟಿದ್ದಾರೆ.</verse>
				<verse number="36">ಇದಲ್ಲದೆ ನನ್ನ ಯಜಮಾನನ ಹೆಂಡತಿ ಸಾರಳು ಮುದಿಪ್ರಾಯದಲ್ಲಿ ನನ್ನ ಯಜಮಾನನಿಗೆ ಮಗನನ್ನು ಹೆತ್ತಿದ್ದಾಳೆ. ಇವನು ತನಗಿದ್ದದ್ದನ್ನೆಲ್ಲಾ ಅವನಿಗೆ ಕೊಟ್ಟಿದ್ದಾನೆ.</verse>
				<verse number="37">ನನ್ನ ಯಜಮಾನನು, ‘ನಾನು ಯಾರ ದೇಶದಲ್ಲಿ ವಾಸಮಾಡುತ್ತೇನೋ, ಆ ಕಾನಾನ್ಯರ ಪುತ್ರಿಯರಲ್ಲಿ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳಬೇಡ.</verse>
				<verse number="38">ಆದರೆ ನೀನು ನನ್ನ ತಂದೆಯ ಮನೆಗೂ, ನನ್ನ ಬಂಧುಗಳ ಬಳಿಗೂ ಹೋಗಿ, ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳಬೇಕೆಂದು,’ ನನ್ನಿಂದ ಪ್ರಮಾಣ ಮಾಡಿಸಿಕೊಂಡಿದ್ದಾನೆ.</verse>
				<verse number="39">“ನಾನು ನನ್ನ ಯಜಮಾನನಿಗೆ, ‘ಒಂದು ವೇಳೆ ಆ ಸ್ತ್ರೀ ನನ್ನನ್ನು ಹಿಂಬಾಲಿಸದೆ ಹೋದಾಳು,’ ಹೇಳಿದೆ.</verse>
				<verse number="40">“ಅವನು ನನಗೆ, ‘ನಾನು ಯಾರ ಮುಂದೆ ನಂಬಿಗಸ್ತಿಕೆಯಿಂದ ನಡೆದುಕೊಳ್ಳುತ್ತೇನೋ, ಆ ಯೆಹೋವ ದೇವರು ತಮ್ಮ ದೂತನನ್ನು ನಿನ್ನ ಸಂಗಡ ಕಳುಹಿಸಿ, ನೀನು ನನ್ನ ಬಂಧುಗಳಿಂದಲೂ ನನ್ನ ತಂದೆಯ ಮನೆಯೊಳಗಿಂದಲೂ ನನ್ನ ಮಗನಿಗೋಸ್ಕರ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ ನಿನ್ನ ಪ್ರಯತ್ನವನ್ನು ಸಫಲಮಾಡುವರು.</verse>
				<verse number="41">ನೀನು ನನ್ನ ಬಂಧುಗಳ ಬಳಿಗೆ ಬಂದಾಗ, ಅವರು ನಿನಗೆ ಆ ಹುಡುಗಿಯನ್ನು ಕೊಡದೆ ಹೋದರೆ, ನಾನು ಮಾಡಿಸಿದ ಪ್ರಮಾಣದಿಂದ ಬಿಡುಗಡೆಯಾಗಿರುವೆ,’ ” ಎಂದನು.</verse>
				<verse number="42">“ಈ ದಿನ ನಾನು ಆ ಬಾವಿಯ ಬಳಿಗೆ ಬಂದಾಗ, ‘ನನ್ನ ಯಜಮಾನನಾದ ಅಬ್ರಹಾಮನ ದೇವರಾದ ಯೆಹೋವ ದೇವರೇ, ನೀವು ಬಯಸಿದರೆ, ದಯವಿಟ್ಟು ನಾನು ಬಂದ ಪ್ರಯಾಣಕ್ಕೆ ನೀವು ಸಫಲ ಮಾಡಿದ್ದಾದರೆ,</verse>
				<verse number="43">ಇಗೋ, ನಾನು ಈಗ ಬಾವಿಯ ಬಳಿಯಲ್ಲಿ ನಿಂತಿದ್ದೇನೆ. ಯಾವ ಹುಡುಗಿ ನೀರು ಸೇದುವುದಕ್ಕೆ ಹೊರಗೆ ಬರುತ್ತಾಳೋ, ನಾನು ಆಕೆಗೆ, “ನಿನ್ನ ಕೊಡದೊಳಗಿಂದ ನನಗೆ ಕುಡಿಯುವುದಕ್ಕೆ ಸ್ವಲ್ಪ ನೀರು ಕೊಡು,” ಎಂದು ಕೇಳಿದಾಗ,</verse>
				<verse number="44">ಆಕೆಯು ನನಗೆ, “ನೀನೂ ಕುಡಿ, ನಿನ್ನ ಒಂಟೆಗಳಿಗೂ ಸೇದಿ ಹಾಕುತ್ತೇನೆ,” ಎಂದು ನನಗೆ ಹೇಳಿದರೆ, ಆಕೆಯೇ ಯೆಹೋವ ದೇವರಿಂದ ನನ್ನ ಯಜಮಾನನ ಮಗನಿಗೆ ನೇಮಕವಾದ ಹೆಂಡತಿಯಾಗಿರಲಿ,’ ಎಂದುಕೊಂಡೆನು.</verse>
				<verse number="45">“ನಾನು ನನ್ನ ಹೃದಯದಲ್ಲಿ ಹಾಗೆ ಅಂದುಕೊಂಡು ಮುಗಿಸುವುದರೊಳಗಾಗಿ, ರೆಬೆಕ್ಕಳು ತನ್ನ ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಹೊರಗೆ ಬಂದಳು. ಆಕೆಯು ಬಾವಿಯಿಂದ ನೀರನ್ನು ಸೇದಿದಳು. ಆಗ ನಾನು, ‘ನನಗೆ ಕುಡಿಯುವುದಕ್ಕೆ ಕೊಡು,’ ಎಂದು ಆಕೆಯನ್ನು ಕೇಳಿದೆನು.</verse>
				<verse number="46">“ಅದಕ್ಕೆ ಆಕೆಯು ತ್ವರೆಪಟ್ಟು, ತನ್ನ ಹೆಗಲಿನ ಮೇಲಿನಿಂದ ಕೊಡವನ್ನು ಇಳಿಸಿ, ‘ನೀನು ಕುಡಿ ಮತ್ತು ನಿನ್ನ ಒಂಟೆಗಳಿಗೂ ನೀರು ತಂದುಕೊಡುತ್ತೇನೆ,’ ಎಂದಳು. ಆಗ ನಾನು ಕುಡಿದೆನು, ಆಕೆಯು ಒಂಟೆಗಳಿಗೂ ನೀರನ್ನು ತಂದುಕೊಟ್ಟಳು.</verse>
				<verse number="47">“ನಾನು ಆಕೆಗೆ, ‘ನೀನು ಯಾರ ಮಗಳು?’ ಎಂದು ಕೇಳಿದೆನು. “ಅದಕ್ಕವಳು, ‘ನಾಹೋರನಿಗೆ ಮಿಲ್ಕಾಳು ಹೆತ್ತ ಮಗನಾದ ಬೆತೂಯೇಲನ ಮಗಳು,’ ಎಂದಳು. “ಆಗ ನಾನು ಆಕೆಗೆ ಮೂಗುತಿಯನ್ನೂ, ಆಕೆಯ ಕೈಗಳಿಗೆ ಬಳೆಗಳನ್ನೂ ಕೊಟ್ಟು,</verse>
				<verse number="48">ತಲೆಬಾಗಿ ಯೆಹೋವ ದೇವರನ್ನು ಆರಾಧಿಸಿ, ನನ್ನ ಯಜಮಾನನ ಸಹೋದರನ ಮಗಳನ್ನು ಅವನ ಮಗನಿಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕೆ ನನ್ನನ್ನು ಸರಿಯಾದ ಮಾರ್ಗದಲ್ಲಿ ನಡೆಸಿದ ನನ್ನ ಯಜಮಾನನಾದ ಅಬ್ರಹಾಮನ ದೇವರಾಗಿರುವ ಯೆಹೋವ ದೇವರನ್ನು ಕೊಂಡಾಡಿದೆ.</verse>
				<verse number="49">ಆದ್ದರಿಂದ ನೀವು ನನ್ನ ಯಜಮಾನನಿಗೆ ದಯೆಯಿಂದಲೂ ನಂಬಿಗಸ್ತಿಕೆಯಿಂದಲೂ ವರ್ತಿಸುವುದಾದರೆ ನನಗೆ ತಿಳಿಸಿರಿ. ಇಲ್ಲದಿದ್ದರೂ ನನಗೆ ತಿಳಿಸಿರಿ. ಆಗ ನಾನು ಬಲಗಡೆಯಾದರೂ, ಎಡಗಡೆಯಾದರೂ ತಿರುಗಿಕೊಂಡುಹೋಗುವೆನು,” ಎಂದನು.</verse>
				<verse number="50">ಅದಕ್ಕೆ ಲಾಬಾನನು ಮತ್ತು ಬೆತೂಯೇಲನು, “ಈ ಕಾರ್ಯವು ಯೆಹೋವ ದೇವರಿಂದಲೇ ಉಂಟಾಯಿತು. ನಾವಂತೂ ಹೌದೆಂದೂ ಅಲ್ಲವೆಂದೂ ಹೇಳಲಾರೆವು</verse>
				<verse number="51">ರೆಬೆಕ್ಕಳನ್ನು ನಿನ್ನ ವಶಕ್ಕೆ ಕೊಡುತ್ತೇವೆ; ಕರೆದುಕೊಂಡು ಹೋಗಬಹುದು; ಯೆಹೋವ ದೇವರು ಹೇಳಿದಂತೆಯೇ ಆಕೆ ನಿನ್ನೊಡೆಯನ ಮಗನಿಗೆ ಹೆಂಡತಿಯಾಗಲಿ,” ಎಂದರು.</verse>
				<verse number="52">ಅಬ್ರಹಾಮನ ಸೇವಕನು ಅವರ ಮಾತನ್ನು ಕೇಳಿದಾಗ ಯೆಹೋವ ದೇವರ ಮುಂದೆ ಅಡ್ಡಬಿದ್ದು, ಆರಾಧಿಸಿದನು.</verse>
				<verse number="53">ಅವನು ಬೆಳ್ಳಿಯ ಒಡವೆ, ಬಂಗಾರದ ಒಡವೆ, ವಸ್ತ್ರಗಳನ್ನೂ ತಂದು, ರೆಬೆಕ್ಕಳಿಗೆ ಕೊಟ್ಟನು. ಆಕೆಯ ಸಹೋದರನಿಗೂ, ಆಕೆಯ ತಾಯಿಗೂ ಅಮೂಲ್ಯವಾದ ಉಡುಗೊರೆಗಳನ್ನು ಕೊಟ್ಟನು.</verse>
				<verse number="54">ತರುವಾಯ ಅವನೂ, ಅವನ ಸಂಗಡ ಇದ್ದ ಜನರೂ ಊಟಮಾಡಿ, ಕುಡಿದು, ರಾತ್ರಿಯನ್ನು ಅಲ್ಲೇ ಕಳೆದರು. ಬೆಳಿಗ್ಗೆ ಎದ್ದ ಮೇಲೆ ಅವನು, “ನನ್ನನ್ನು ನನ್ನ ಯಜಮಾನನ ಬಳಿಗೆ ಕಳುಹಿಸಿರಿ,” ಎಂದನು.</verse>
				<verse number="55">ಅದಕ್ಕೆ ಆಕೆಯ ಸಹೋದರನೂ, ತಾಯಿಯೂ, “ಹುಡುಗಿಯು ಕೆಲವು ದಿನ ಇರಲಿ. ಹತ್ತು ದಿನಗಳಾದರೂ ನಮ್ಮ ಬಳಿಯಲ್ಲಿ ಇದ್ದು ತರುವಾಯ ಹೋಗಲಿ,” ಎಂದರು.</verse>
				<verse number="56">ಆಗ ಅವನು ಅವರಿಗೆ, “ನನ್ನನ್ನು ತಡೆಯಬೇಡಿರಿ, ಯೆಹೋವ ದೇವರು ನನ್ನ ಮಾರ್ಗವನ್ನು ಸಫಲ ಮಾಡಿದ್ದಾರಲ್ಲಾ. ನನ್ನ ಯಜಮಾನನ ಬಳಿಗೆ ಹೋಗುವಂತೆ ನನ್ನನ್ನು ಕಳುಹಿಸಿರಿ,” ಎಂದನು.</verse>
				<verse number="57">ಆಗ ಅವರು, “ನಾವು ಹುಡುಗಿಯನ್ನು ಕರೆದು, ಆಕೆಯ ಅಭಿಪ್ರಾಯವನ್ನು ವಿಚಾರಿಸೋಣ,” ಎಂದರು.</verse>
				<verse number="58">ಅವರು ರೆಬೆಕ್ಕಳನ್ನು ಕರೆದು ಆಕೆಗೆ, “ಈ ಮನುಷ್ಯನ ಸಂಗಡ ಹೋಗುತ್ತೀಯಾ?” ಎಂದು ಕೇಳಿದರು. ಅದಕ್ಕೆ ಆಕೆಯು, “ನಾನು ಹೋಗುತ್ತೇನೆ,” ಎಂದಳು.</verse>
				<verse number="59">ಆಗ ಅವರು ತಮ್ಮ ಸಹೋದರಿಯಾದ ರೆಬೆಕ್ಕಳನ್ನೂ ಅವಳ ದಾದಿಯನ್ನೂ ಅಬ್ರಹಾಮನ ಸೇವಕನನ್ನೂ ಅವನ ಜೊತೆಯಲ್ಲಿದ್ದ ಮನುಷ್ಯರನ್ನೂ ಸಾಗಕಳುಹಿಸಿದರು.</verse>
				<verse number="60">ಇದಲ್ಲದೆ ಅವರು ರೆಬೆಕ್ಕಳನ್ನು ಹೀಗೆಂದು ಆಶೀರ್ವದಿಸಿದರು: “ನಮ್ಮ ಸಹೋದರಿಯೇ, ನೀನು ಸಹಸ್ರ ಸಹಸ್ರ ಮಕ್ಕಳಿಗೆ ತಾಯಿಯಾಗು. ನಿನ್ನ ಸಂತಾನದವರು ತಮ್ಮ ವೈರಿಗಳ ಪ್ರದೇಶಗಳನ್ನು ಸ್ವಾಧೀನಮಾಡಿಕೊಳ್ಳಲಿ.”</verse>
				<verse number="61">ಆಗ ರೆಬೆಕ್ಕಳೂ, ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿ, ಆ ಮನುಷ್ಯನ ಹಿಂದೆ ಹೋದರು. ಆ ಸೇವಕನು ರೆಬೆಕ್ಕಳನ್ನು ಕರಕೊಂಡು ಹೋದನು.</verse>
				<verse number="62">ಇಸಾಕನು ಬೇರ್ ಲಹೈರೋಯಿ ಬಾವಿಗೆ ಹೋಗಿ ಬಂದನು. ಅವನು ದೇಶದ ನೆಗೆವನಲ್ಲಿ ವಾಸವಾಗಿದ್ದನು.</verse>
				<verse number="63">ಇಸಾಕನು ಸಾಯಂಕಾಲ ಹೊಲದಲ್ಲಿ ಧ್ಯಾನಮಾಡುವುದಕ್ಕೆ ಹೋದಾಗ, ಕಣ್ಣೆತ್ತಿ ನೋಡಲು, ಒಂಟೆಗಳು ಬರುವುದನ್ನು ಕಂಡನು.</verse>
				<verse number="64">ರೆಬೆಕ್ಕಳು ಸಹ ಕಣ್ಣೆತ್ತಿ ಇಸಾಕನನ್ನು ನೋಡಿ, ಒಂಟೆಗಳಿಂದ ಇಳಿದಳು.</verse>
				<verse number="65">ಆಕೆಯು ಆ ಸೇವಕನಿಗೆ, “ಹೊಲದಲ್ಲಿ ನಮಗೆ ಎದುರಾಗಿ ಬರುವ ಆ ಮನುಷ್ಯನು ಯಾರು?” ಎಂದಳು. ಅದಕ್ಕೆ ಸೇವಕನು, “ಅವನೇ ನನ್ನ ಯಜಮಾನನು,” ಎಂದಾಗ, ಆಕೆಯು ಮುಸುಕು ಹಾಕಿಕೊಂಡಳು.</verse>
				<verse number="66">ಆಗ ಸೇವಕನು ಇಸಾಕನಿಗೆ ತಾನು ಮಾಡಿದ ಕಾರ್ಯಗಳನ್ನೆಲ್ಲಾ ತಿಳಿಸಿದನು.</verse>
				<verse number="67">ಇಸಾಕನು ಆಕೆಯನ್ನು ತನ್ನ ತಾಯಿಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಸ್ವೀಕರಿಸಿದನು. ಆಕೆಯು ಅವನ ಹೆಂಡತಿಯಾದಳು, ಅವನು ಆಕೆಯನ್ನು ಪ್ರೀತಿಸಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ದುಃಖ ಶಮನ ಮಾಡಿಕೊಂಡನು.</verse>
			</chapter>
			<chapter number="25">
				<verse number="1">ಅಬ್ರಹಾಮನು ಕೆಟೂರಳೆಂಬ ಇನ್ನೊಬ್ಬಳನ್ನು ಮದುವೆಮಾಡಿಕೊಂಡನು.</verse>
				<verse number="2">ಆಕೆಯು ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.</verse>
				<verse number="3">ಯೊಕ್ಷಾನನಿಗೆ ಶೆಬಾ ಮತ್ತು ದೆದಾನ್ ಹುಟ್ಟಿದರು. ದೆದಾನನ ಪುತ್ರರು ಅಶ್ಯೂರರು, ಲೆಟೂಶ್ಯರೂ, ಲೆಯುಮ್ಯರೂ.</verse>
				<verse number="4">ಮಿದ್ಯಾನನ ಪುತ್ರರು: ಏಫಾ, ಏಫೆರ್, ಹನೋಕ್, ಅಬೀದ, ಎಲ್ದಾಯ. ಇವರೆಲ್ಲರೂ ಕೆಟೂರಳ ಸಂತತಿಯವರು.</verse>
				<verse number="5">ಆದರೆ ಅಬ್ರಹಾಮನು ತನಗಿದ್ದದ್ದನ್ನೆಲ್ಲಾ ಇಸಾಕನಿಗೆ ಕೊಟ್ಟನು.</verse>
				<verse number="6">ಅಬ್ರಹಾಮನಿಗೆ ಇದ್ದ ಉಪಪತ್ನಿಯರ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು, ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಕಳುಹಿಸಿದನು.</verse>
				<verse number="7">ಅಬ್ರಹಾಮನು ನೂರೆಪ್ಪತ್ತೈದು ವರ್ಷಗಳವರೆಗೆ ಜೀವಿಸಿದನು.</verse>
				<verse number="8">ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿ ಮರಣಹೊಂದಿ ತನ್ನ ಪಿತೃಗಳ ಬಳಿಗೆ ಸೇರಿದನು.</verse>
				<verse number="9">ಅವನ ಪುತ್ರರಾದ ಇಸಾಕನೂ, ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯನಾದ ಚೋಹರನ ಮಗ ಎಫ್ರೋನನ ಹೊಲದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಳಿಟ್ಟರು.</verse>
				<verse number="10">ಅಬ್ರಹಾಮನು ಅದನ್ನು ಹಿತ್ತಿಯರಿಂದ ಕೊಂಡುಕೊಂಡಿದ್ದನು. ಅಬ್ರಹಾಮನಿಗೂ, ಅವನ ಹೆಂಡತಿ ಸಾರಳಿಗೂ ಒಂದೇ ಸ್ಥಳದಲ್ಲಿ ಸಮಾಧಿ ಆಯಿತು.</verse>
				<verse number="11">ಅಬ್ರಹಾಮನು ಸತ್ತ ನಂತರ ದೇವರು ಅವನ ಮಗ ಇಸಾಕನನ್ನು ಆಶೀರ್ವದಿಸಿದರು. ಇಸಾಕನು ಬೇರ್ ಲಹೈರೋಯಿ ಎಂಬ ಬಾವಿಯ ಬಳಿಯಲ್ಲಿ ವಾಸಿಸಿದನು.</verse>
				<verse number="12">ಸಾರಳ ದಾಸಿ ಈಜಿಪ್ಟಿನ ಹಾಗರಳು ಅಬ್ರಹಾಮನಿಗೆ ಹೆತ್ತ ಮಗ ಇಷ್ಮಾಯೇಲನ ವಂಶಾವಳಿ:</verse>
				<verse number="13">ಜನನದ ಪ್ರಕಾರ ಇಷ್ಮಾಯೇಲನ ಪುತ್ರರ ಹೆಸರುಗಳು ಇವೇ: ಇಷ್ಮಾಯೇಲನ ಚೊಚ್ಚಲ ಮಗನು ನೆಬಾಯೋತ್, ಕೇದಾರ್, ಅದ್ಬೆಯೇಲ್, ಮಿಬ್ಸಾಮ್,</verse>
				<verse number="14">ಮಿಷ್ಮಾ, ದೂಮಾ, ಮಸ್ಸಾ,</verse>
				<verse number="15">ಹದದ್, ತೇಮಾ, ಯೆಟೂರ್, ನಾಫೀಷ್, ಕೇದೆಮ.</verse>
				<verse number="16">ಇವರೇ ಇಷ್ಮಾಯೇಲನ ಪುತ್ರರು. ಇವುಗಳೇ ಅವರ ಗ್ರಾಮಗಳ ಪ್ರಕಾರವಾಗಿಯೂ, ಪಾಳೆಯಗಳ ಪ್ರಕಾರವಾಗಿಯೂ ಇರುವ ಅವರ ಹೆಸರುಗಳು. ಅವರು ತಮ್ಮ ಜನಾಂಗಗಳ ಪ್ರಕಾರ ಹನ್ನೆರಡು ಮಂದಿ ಪ್ರಭುಗಳು.</verse>
				<verse number="17">ಇಷ್ಮಾಯೇಲನು ಬದುಕಿದ ವರ್ಷಗಳು ನೂರಮೂವತ್ತೇಳು. ಅವನು ಮರಣಹೊಂದಿ ತನ್ನ ಪಿತೃಗಳ ಬಳಿಗೆ ಸೇರಿದನು.</verse>
				<verse number="18">ಅವನ ವಂಶಸ್ಥರು ಅಸ್ಸೀರಿಯಗೆ ಹೋಗುವ, ಈಜಿಪ್ಟಿನ ಮೇರೆಯಲ್ಲಿ ಹವೀಲದಿಂದ ಶೂರ್‌ವರೆಗಿನ ಪ್ರದೇಶದಲ್ಲಿ ವಾಸಿಸಿದರು. ಅವರು ತಮ್ಮ ಎಲ್ಲಾ ಸಹೋದರರೊಂದಿಗೆ ಎದುರುಬದಿರಿನಲ್ಲೇ ವಾಸಮಾಡಿದರು.</verse>
				<verse number="19">ಅಬ್ರಹಾಮನ ಮಗ ಇಸಾಕನ ವಂಶಾವಳಿ: ಅಬ್ರಹಾಮನಿಂದ ಇಸಾಕನು ಹುಟ್ಟಿದನು.</verse>
				<verse number="20">ಇಸಾಕನು ನಲವತ್ತು ವರ್ಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂಯೇಲನ ಮಗಳೂ, ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತೆಗೆದುಕೊಂಡನು.</verse>
				<verse number="21">ಆದರೆ ಆಕೆಯು ಬಂಜೆಯಾಗಿದ್ದುದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಯೆಹೋವ ದೇವರನ್ನು ಬೇಡಿಕೊಂಡನು. ಯೆಹೋವ ದೇವರು ಅವನ ಬೇಡಿಕೆಯನ್ನು ಪೂರೈಸಿದರು. ಆದ್ದರಿಂದ ಅವನ ಹೆಂಡತಿ ರೆಬೆಕ್ಕಳು ಗರ್ಭಿಣಿಯಾದಳು.</verse>
				<verse number="22">ಅವಳ ಗರ್ಭದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು, “ನನಗೆ ಏಕೆ ಹೀಗಾಗುತ್ತಿದೆ?” ಎಂದು ಕೇಳಿ, ಯೆಹೋವ ದೇವರ ಬಳಿಗೆ ವಿಚಾರಿಸುವುದಕ್ಕೆ ಹೋದಳು.</verse>
				<verse number="23">ಯೆಹೋವ ದೇವರು ಆಕೆಗೆ ಹೀಗೆ ಹೇಳಿದರು: “ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ಜನಾಂಗಗಳು ಹೊರಟುಬಂದು ಬೇರೆಯಾಗುವುವು. ಒಂದು ಇನ್ನೊಂದಕ್ಕಿಂತ ಬಲವಾಗಿರುವುದು. ಇದಲ್ಲದೆ ಹಿರಿಯನು ಕಿರಿಯವನಿಗೆ ಸೇವೆಮಾಡುವನು.”</verse>
				<verse number="24">ಆಕೆಯು ಹೆರುವುದಕ್ಕೆ ದಿನತುಂಬಿದಾಗ, ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿದ್ದರು.</verse>
				<verse number="25">ಮೊದಲನೆಯವನು ಕೆಂಪಾಗಿಯೂ ಕೂದಲಿನ ವಸ್ತ್ರದಂತೆ ಇಡೀ ದೇಹವು ಇದ್ದುದರಿಂದ ಅವನಿಗೆ, ಏಸಾವ, ಎಂದು ಹೆಸರಿಟ್ಟರು.</verse>
				<verse number="26">ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡಿದುಕೊಂಡು ಹೊರಗೆ ಬಂದನು. ಅವನಿಗೆ, ಯಾಕೋಬ, ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರವತ್ತು ವರ್ಷದವನಾಗಿದ್ದನು.</verse>
				<verse number="27">ಆ ಹುಡುಗರು ಬೆಳೆದಾಗ ಏಸಾವನು ಬೇಟೆಯಾಡುವುದರಲ್ಲಿ ಜಾಣನಾಗಿದ್ದು, ಅಡವಿಯ ಮನುಷ್ಯನಾದನು. ಯಾಕೋಬನು ಗುಡಾರಗಳಲ್ಲಿ ವಾಸಮಾಡುವ ಸಾಧು ಮನುಷ್ಯನಾಗಿದ್ದನು.</verse>
				<verse number="28">ಬೇಟೆಯಲ್ಲಿ ಆಸಕ್ತನಾಗಿದ್ದ ಇಸಾಕನು ಏಸಾವನನ್ನು ಪ್ರೀತಿಸಿದನು. ಆದರೆ ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು.</verse>
				<verse number="29">ಒಂದು ಸಾರಿ ಯಾಕೋಬನು ಅಡಿಗೆ ಮಾಡುತ್ತಿದ್ದಾಗ, ಏಸಾವನು ದಣಿದು ಅಡವಿಯಿಂದ ಬಂದನು.</verse>
				<verse number="30">ಏಸಾವನು ಯಾಕೋಬನಿಗೆ, “ಆ ಕೆಂಪಾದ ಪದಾರ್ಥವನ್ನು ತಿನ್ನುವುದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ,” ಎಂದನು. ಆದ್ದರಿಂದ ಅವನಿಗೆ, ಎದೋಮ್, ಎಂದು ಹೆಸರಾಯಿತು.</verse>
				<verse number="31">ಆಗ ಯಾಕೋಬನು, “ಈ ಹೊತ್ತು ನಿನ್ನ ಜೇಷ್ಠ ಪುತ್ರನ ಹಕ್ಕನ್ನು ನನಗೆ ಮಾರು,” ಎಂದನು.</verse>
				<verse number="32">ಏಸಾವನು, “ಇಗೋ, ನಾನು ಸಾಯುತ್ತಿದ್ದೇನೆ, ಜೇಷ್ಠ ಪುತ್ರನ ಹಕ್ಕಿನಿಂದ ನನಗೇನು ಲಾಭ?” ಎಂದನು.</verse>
				<verse number="33">ಯಾಕೋಬನು, “ಈ ಹೊತ್ತು ನನಗೆ ಪ್ರಮಾಣಮಾಡು,” ಎಂದನು. ಆಗ ಅವನು ಯಾಕೋಬನಿಗೆ ಪ್ರಮಾಣಮಾಡಿ, ತನ್ನ ಜೇಷ್ಠ ಪುತ್ರನ ಹಕ್ಕನ್ನು ಅವನಿಗೆ ಮಾರಿದನು.</verse>
				<verse number="34">ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ, ಅಲಸಂದಿ ಗುಗ್ಗರಿಯನ್ನೂ ಕೊಟ್ಟನು. ಅವನು ತಿಂದು, ಕುಡಿದು ಎದ್ದು ಹೋದನು. ಹೀಗೆ ಏಸಾವನು ತನ್ನ ಜೇಷ್ಠ ಪುತ್ರನ ಹಕ್ಕನ್ನು ತಾತ್ಸಾರದಿಂದ ಕಂಡನು.</verse>
			</chapter>
			<chapter number="26">
				<verse number="1">ಅಬ್ರಹಾಮನ ದಿನಗಳಲ್ಲಿ ಬಂದ ಮೊದಲನೆಯ ಬರವಲ್ಲದೆ, ದೇಶದಲ್ಲಿ ಮತ್ತೊಂದು ಬರವು ಬಂದಿತು. ಆಗ ಇಸಾಕನು ಗೆರಾರಿನಲ್ಲಿದ್ದ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನ ಬಳಿಗೆ ಹೋದನು.</verse>
				<verse number="2">ಆಗ ಯೆಹೋವ ದೇವರು ಅವನಿಗೆ ಕಾಣಿಸಿಕೊಂಡು, “ಈಜಿಪ್ಟಿಗೆ ಇಳಿದು ಹೋಗಬೇಡ. ನಾನು ನಿನಗೆ ಹೇಳುವ ದೇಶದಲ್ಲಿ ವಾಸವಾಗಿರು.</verse>
				<verse number="3">ಈ ದೇಶದಲ್ಲಿ ಪ್ರವಾಸಿಯಾಗಿರು. ಆಗ ನಾನು ನಿನ್ನ ಸಂಗಡ ಇದ್ದು, ನಿನ್ನನ್ನು ಆಶೀರ್ವದಿಸುವೆನು. ನಿನಗೂ, ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.</verse>
				<verse number="4">ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯ ಮೂಲಕ ಭೂಮಿಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದವಾಗುವುದು.</verse>
				<verse number="5">ಏಕೆಂದರೆ ಅಬ್ರಹಾಮನು ನನ್ನ ಮಾತಿಗೆ ನನ್ನ ವಿಧಿಯನ್ನೂ, ನನ್ನ ಆಜ್ಞೆಗಳನ್ನೂ, ನನ್ನ ಕಟ್ಟಳೆಗಳನ್ನೂ ನನ್ನ ನೇಮಗಳನ್ನೂ, ಕೈಗೊಂಡು ನಡೆದನು,” ಎಂದರು.</verse>
				<verse number="6">ಆಗ ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು.</verse>
				<verse number="7">ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು, ರೆಬೆಕ್ಕಳು ನೋಟಕ್ಕೆ ಚೆಲುವೆಯಾಗಿದ್ದುದರಿಂದ ಆಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು, ಆಕೆ ತನ್ನ ಹೆಂಡತಿಯೆಂದು ಹೇಳುವುದಕ್ಕೆ ಅಂಜಿ ಅವನು, “ಆಕೆಯು ನನ್ನ ತಂಗಿ” ಎಂದನು.</verse>
				<verse number="8">ಅವನು ಅಲ್ಲಿ ಬಹಳ ದಿನಗಳಿದ್ದ ಮೇಲೆ, ಒಂದು ದಿನ ಫಿಲಿಷ್ಟಿಯರ ಅರಸನಾದ ಅಬೀಮೆಲೆಕನು ಕಿಟಕಿಯಿಂದ ನೋಡುತ್ತಿದ್ದಾಗ, ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸಮಾಡುವುದನ್ನು ಕಂಡನು.</verse>
				<verse number="9">ಆಗ ಅಬೀಮೆಲೆಕನು ಇಸಾಕನನ್ನು ಕರೆದು, “ಆಕೆಯು ಖಂಡಿತ ನಿನ್ನ ಹೆಂಡತಿಯಾಗಿದ್ದಾಳೆ. ಆದರೆ ನೀನು, ‘ಆಕೆಯು ನನ್ನ ತಂಗಿ,’ ಎಂದು ಏಕೆ ಹೇಳಿದೆ?” ಎಂದನು. ಇಸಾಕನು ಅವನಿಗೆ, “ನಾನು ಆಕೆಯ ನಿಮಿತ್ತ ಸಾಯಬಾರದೆಂದು ಹಾಗೆ ಹೇಳಿದೆನು,” ಎಂದನು.</verse>
				<verse number="10">ಆಗ ಅಬೀಮೆಲೆಕನು, “ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯನ್ನು ತೆಗೆದುಕೊಂಡಿದ್ದರೆ, ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ,” ಎಂದನು.</verse>
				<verse number="11">ಅಬೀಮೆಲೆಕನು ತನ್ನ ಜನರಿಗೆಲ್ಲಾ, “ಈ ಮನುಷ್ಯನನ್ನಾಗಲಿ, ಅವನ ಹೆಂಡತಿಯನ್ನಾಗಲಿ ಮುಟ್ಟುವವನು ಖಂಡಿತವಾಗಿ ಸಾಯಬೇಕು,” ಎಂದು ಅಪ್ಪಣೆಕೊಟ್ಟನು.</verse>
				<verse number="12">ಇಸಾಕನು ಆ ದೇಶದಲ್ಲಿ ಬಿತ್ತಿದ ವರ್ಷದಲ್ಲಿಯೇ ನೂರರಷ್ಟು ಬೆಳೆಯನ್ನು ಹೊಂದಿದನು. ಯೆಹೋವ ದೇವರು ಅವನನ್ನು ಆಶೀರ್ವದಿಸಿದರು.</verse>
				<verse number="13">ಅವನು ಬಹಳ ಶ್ರೀಮಂತನಾಗಿ, ಕ್ರಮೇಣವಾಗಿ ಹೆಚ್ಚಿದ್ದರಿಂದ ಅಭಿವೃದ್ಧಿಯಾದನು.</verse>
				<verse number="14">ಏಕೆಂದರೆ ಅವನಿಗೆ ಕುರಿ ಮಂದೆಗಳೂ ದನಗಳ ಹಿಂಡುಗಳೂ ಬಹಳ ಮಂದಿ ಸೇವಕರೂ ಇದ್ದರು. ಆದ್ದರಿಂದ ಫಿಲಿಷ್ಟಿಯರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು.</verse>
				<verse number="15">ಅವನ ತಂದೆ ಅಬ್ರಹಾಮನ ದಿನಗಳಲ್ಲಿ ಅಬ್ರಹಾಮನ ಸೇವಕರು ಅಗೆದ ಬಾವಿಗಳನ್ನೆಲ್ಲಾ ಫಿಲಿಷ್ಟಿಯರು ಮಣ್ಣುಹಾಕಿ ಮುಚ್ಚಿದರು.</verse>
				<verse number="16">ಅಬೀಮೆಲೆಕನು ಇಸಾಕನಿಗೆ, “ನಮ್ಮನ್ನು ಬಿಟ್ಟು ಹೋಗು, ಏಕೆಂದರೆ ನೀನು ನಮಗಿಂತ ಬಲಿಷ್ಠನಾಗಿಬಿಟ್ಟೆ,” ಎಂದನು.</verse>
				<verse number="17">ಆಗ ಇಸಾಕನು ಅಲ್ಲಿಂದ ಹೋಗಿ ಗೆರಾರಿನ ತಗ್ಗಿನಲ್ಲಿ ಗುಡಾರ ಹಾಕಿ, ಅಲ್ಲಿ ವಾಸಮಾಡಿದನು.</verse>
				<verse number="18">ಇದಲ್ಲದೆ ಇಸಾಕನು ತನ್ನ ತಂದೆ ಅಬ್ರಹಾಮನ ದಿನಗಳಲ್ಲಿ ಅಗೆದಂಥ ಬಾವಿಗಳನ್ನು ತಿರುಗಿ ಅಗೆದನು. ಏಕೆಂದರೆ ಅಬ್ರಹಾಮನು ಮರಣದ ನಂತರ ಫಿಲಿಷ್ಟಿಯರು ಅವುಗಳನ್ನು ಮುಚ್ಚಿದ್ದರು. ಅವುಗಳಿಗೆ ತನ್ನ ತಂದೆಯು ಕೊಟ್ಟ ಹೆಸರುಗಳ ಪ್ರಕಾರವೇ ಅವನು ಅವುಗಳಿಗೆ ಹೆಸರುಕೊಟ್ಟನು.</verse>
				<verse number="19">ಇಸಾಕನ ಸೇವಕರು ತಗ್ಗಿನಲ್ಲಿ ಅಗೆದಾಗ, ಅಲ್ಲಿ ಅವರಿಗೆ ಉಕ್ಕುವ ಒರತೆಯ ಬಾವಿಯು ಸಿಕ್ಕಿತು.</verse>
				<verse number="20">ಗೆರಾರಿನ ಮಂದೆಯನ್ನು ಮೇಯಿಸುವವರು, “ಈ ನೀರು ನಮ್ಮದು,” ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ, ಏಸೆಕ್, ಎಂದು ಹೆಸರಿಟ್ಟನು.</verse>
				<verse number="21">ತರುವಾಯ ಅವರು ಇನ್ನೊಂದು ಬಾವಿಯನ್ನು ಅಗೆದಾಗ, ಅದಕ್ಕಾಗಿಯೂ ಅವರು ಜಗಳವಾಡಿದಾಗ, ಅವನು ಅದಕ್ಕೆ, ಸಿಟ್ನಾ, ಎಂದು ಹೆಸರಿಟ್ಟನು.</verse>
				<verse number="22">ಅಲ್ಲಿಂದ ಅವನು ಹೊರಟುಹೋಗಿ ಇನ್ನೊಂದು ಬಾವಿಯನ್ನು ಅಗೆದಾಗ, ಅದಕ್ಕಾಗಿ ಅವರು ಜಗಳವಾಡಲಿಲ್ಲ. ಅದಕ್ಕೆ ಅವನು, “ಈಗ ಯೆಹೋವ ದೇವರು ನಮಗೆ ಸ್ಥಳವನ್ನು ಮಾಡಿದ್ದಾರೆ. ನಾವು ಈ ದೇಶದಲ್ಲಿ ಅಭಿವೃದ್ಧಿ ಹೊಂದುವೆವು,” ಎಂದು ಹೇಳಿ ಅದಕ್ಕೆ, ರೆಹೋಬೋತ್, ಎಂದು ಹೆಸರಿಟ್ಟನು.</verse>
				<verse number="23">ಅಲ್ಲಿಂದ ಅವನು ಬೇರ್ಷೆಬಕ್ಕೆ ಹೋದನು.</verse>
				<verse number="24">ಅದೇ ರಾತ್ರಿಯಲ್ಲಿ ಯೆಹೋವ ದೇವರು ಅವನಿಗೆ ಕಾಣಿಸಿಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ, ಭಯಪಡಬೇಡ. ಏಕೆಂದರೆ ನಾನು ನಿನ್ನ ಸಂಗಡ ಇದ್ದೇನೆ, ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ, ನಿನ್ನ ಸಂತತಿಯನ್ನು ಹೆಚ್ಚಿಸುವೆನು,” ಎಂದರು.</verse>
				<verse number="25">ಆಗ ಇಸಾಕನು ಅಲ್ಲಿ ಬಲಿಪೀಠವನ್ನು ಕಟ್ಟಿ, ಯೆಹೋವ ದೇವರ ಹೆಸರನ್ನು ಹೇಳಿಕೊಂಡು, ತನ್ನ ಗುಡಾರವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗೆದರು.</verse>
				<verse number="26">ತರುವಾಯ ಅಬೀಮೆಲೆಕನೂ, ಅವನ ಸ್ನೇಹಿತರಲ್ಲಿ ಒಬ್ಬನಾದ ಅಹುಜ್ಜತನೂ, ಅವನ ಮುಖ್ಯ ಸೈನ್ಯಾಧಿಪತಿ ಫೀಕೋಲನೂ ಗೆರಾರಿನಿಂದ ಅವನ ಬಳಿಗೆ ಬಂದರು.</verse>
				<verse number="27">ಇಸಾಕನು ಅವರಿಗೆ, “ನನ್ನ ಬಳಿಗೆ ನೀವು ಏಕೆ ಬಂದಿದ್ದೀರಿ? ನೀವು ನನ್ನನ್ನು ಹಗೆಮಾಡಿ, ನಿಮ್ಮ ಬಳಿಯಿಂದ ನನ್ನನ್ನು ಕಳುಹಿಸಿಬಿಟ್ಟಿರಲ್ಲಾ?” ಎಂದನು.</verse>
				<verse number="28">ಅದಕ್ಕೆ ಅವರು, “ನಿಶ್ಚಯವಾಗಿ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ ಎಂದು ತಿಳಿದು, ನಮಗೂ, ನಿನಗೂ ಮಧ್ಯದಲ್ಲಿ ಒಂದು ಪ್ರಮಾಣವಿರುವ ಹಾಗೆ, ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳೋಣವೆಂದು ನಾವು ತೀರ್ಮಾನಿಸಿದ್ದೇವೆ.</verse>
				<verse number="29">ಅದೇನೆಂದರೆ, ನಾವು ನಿನ್ನನ್ನು ಮುಟ್ಟದೆ, ನಿನಗೆ ಒಳ್ಳೆಯದನ್ನೇ ಮಾಡಿ, ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು. ಏಕೆಂದರೆ ನೀನು ಈಗ ಯೆಹೋವ ದೇವರಿಂದ ಆಶೀರ್ವಾದ ಹೊಂದಿರುವೆ,” ಎಂದರು.</verse>
				<verse number="30">ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು. ಅವರೆಲ್ಲರೂ ತಿಂದು ಕುಡಿದರು.</verse>
				<verse number="31">ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣ ಮಾಡಿಕೊಂಡರು. ಅನಂತರ ಇಸಾಕನು ಅವರನ್ನು ಸಾಗಕಳುಹಿಸಿದನು. ಅವರು ಸಮಾಧಾನದಿಂದ ಹೊರಟು ಹೋದರು.</verse>
				<verse number="32">ಅದೇ ದಿನದಲ್ಲಿ ಇಸಾಕನ ಸೇವಕರು ಬಂದು ತಾವು ಅಗೆದ ಬಾವಿಯಲ್ಲಿ, “ನೀರು ಸಿಕ್ಕಿತ್ತು,” ಎಂದು ಅವನಿಗೆ ಹೇಳಿದರು.</verse>
				<verse number="33">ಅದಕ್ಕೆ ಅವನು, ಷಿಬಾ, ಎಂದು ಹೆಸರಿಟ್ಟನು. ಆದ್ದರಿಂದ ಇಂದಿನವರೆಗೂ ಬೇರ್ಷೆಬ ಎಂದು ಆ ಪಟ್ಟಣಕ್ಕೆ ಹೆಸರಾಯಿತು.</verse>
				<verse number="34">ಏಸಾವನು ನಲವತ್ತು ವರ್ಷದವನಾಗಿದ್ದಾಗ, ಹಿತ್ತಿಯನಾದ ಬೇರಿಯನ ಮಗಳಾದ ಯೆಹೂದೀತಳನ್ನೂ, ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಮದುವೆಯಾದನು.</verse>
				<verse number="35">ಇವರ ದೆಸೆಯಿಂದ ಇಸಾಕನಿಗೂ, ರೆಬೆಕ್ಕಳಿಗೂ ಮನೋವ್ಯಥೆಯಾಯಿತು.</verse>
			</chapter>
			<chapter number="27">
				<verse number="1">ಇಸಾಕನು ಮುದುಕನಾಗಿ ನೋಡುವುದಕ್ಕಾಗದಷ್ಟು ಅವನ ಕಣ್ಣುಗಳು ಮಬ್ಬಾದಾಗ, ಅವನು ತನ್ನ ಹಿರಿಯ ಮಗ ಏಸಾವನನ್ನು ಕರೆದು ಅವನಿಗೆ, “ನನ್ನ ಮಗನೇ,” ಎಂದನು. ಅವನು ಇಸಾಕನಿಗೆ, “ಇದ್ದೇನೆ,” ಎಂದನು.</verse>
				<verse number="2">ಆಗ ಇಸಾಕನು, “ಇಗೋ, ಈಗ ನಾನು ಮುದುಕನಾಗಿದ್ದೇನೆ. ನನ್ನ ಸಾವಿನ ದಿನವನ್ನು ಅರಿಯೆನು.</verse>
				<verse number="3">ಆದ್ದರಿಂದ ಈಗ ನೀನು ನಿನ್ನ ಆಯುಧಗಳನ್ನೂ, ಬಿಲ್ಲುಬತ್ತಳಿಕೆಯನ್ನೂ, ತೆಗೆದುಕೊಂಡು ಅಡವಿಗೆ ಹೋಗಿ ನನಗೋಸ್ಕರ ಬೇಟೆಯ ಮಾಂಸವನ್ನೂ,</verse>
				<verse number="4">ನಾನು ಇಷ್ಟಪಡುವ ರುಚಿಯಾದ ಊಟವನ್ನೂ ಸಿದ್ಧಮಾಡಿ ತೆಗೆದುಕೊಂಡು ಬಾ. ಆಗ ಸಾಯುವುದಕ್ಕಿಂತ ಮುಂಚೆ ನಾನು ನಿನ್ನನ್ನು ಆಶೀರ್ವದಿಸುವಂತೆ ಅದನ್ನು ಊಟಮಾಡುವೆನು,” ಎಂದನು.</verse>
				<verse number="5">ಇಸಾಕನು ತನ್ನ ಮಗ ಏಸಾವನಿಗೆ ಹೇಳಿದ್ದನ್ನು ರೆಬೆಕ್ಕಳು ಕೇಳಿಸಿಕೊಂಡಳು. ಏಸಾವನು ಬೇಟೆಯಾಡಿ ಅದನ್ನು ತರುವುದಕ್ಕಾಗಿ ಅಡವಿಗೆ ಹೋದನು.</verse>
				<verse number="6">ಆಗ ರೆಬೆಕ್ಕಳು ತನ್ನ ಮಗ ಯಾಕೋಬನಿಗೆ, “ನಿನ್ನ ತಂದೆ ನಿನ್ನ ಸಹೋದರ ಏಸಾವನಿಗೆ,</verse>
				<verse number="7">‘ನನಗೋಸ್ಕರ ಬೇಟೆಯ ಮಾಂಸವನ್ನು ತೆಗೆದುಕೊಂಡು ಬಂದು, ನಾನು ಇಷ್ಟಪಡುವ ರುಚಿಯಾದ ಅಡಿಗೆಯನ್ನು ಮಾಡಿಕೊಂಡು ಬಾ, ಆಗ ನಾನು ಸಾಯುವುದಕ್ಕಿಂತ ಮುಂಚೆ ಊಟಮಾಡಿ, ಯೆಹೋವ ದೇವರ ಸನ್ನಿಧಿಯಲ್ಲಿ ನಿನ್ನನ್ನು ಆಶೀರ್ವದಿಸುವೆನು,’ ಎಂದು ಹೇಳಿದ್ದನ್ನು ನಾನು ಕೇಳಿಸಿಕೊಂಡಿದ್ದೇನೆ.</verse>
				<verse number="8">ಆದ್ದರಿಂದ ಈಗ ನನ್ನ ಮಗನೇ, ನಾನು ನಿನಗೆ ಆಜ್ಞಾಪಿಸುವ ನನ್ನ ಮಾತಿಗೆ ವಿಧೇಯನಾಗು.</verse>
				<verse number="9">ನೀನು ಮಂದೆಯ ಬಳಿಗೆ ಹೋಗಿ, ಅಲ್ಲಿಂದ ಎರಡು ಒಳ್ಳೆಯ ಮೇಕೆಯ ಮರಿಗಳನ್ನು ತೆಗೆದುಕೊಂಡು ಬಾ. ನಿನ್ನ ತಂದೆಗೋಸ್ಕರ ನಾನು ಅವುಗಳನ್ನೂ, ಅವನು ಇಷ್ಟಪಡುವ ರುಚಿಯಾದ ಅಡಿಗೆಯನ್ನೂ ಸಿದ್ಧಮಾಡುತ್ತೇನೆ.</verse>
				<verse number="10">ನೀನು ಅದನ್ನು ನಿನ್ನ ತಂದೆಯ ಬಳಿಗೆ ತೆಗೆದುಕೊಂಡು ಹೋಗಬೇಕು. ಅವನು ಸಾಯುವುದಕ್ಕಿಂತ ಮೊದಲು ನಿನ್ನನ್ನು ಆಶೀರ್ವದಿಸುವಂತೆ ಊಟಮಾಡಲಿ,” ಎಂದಳು.</verse>
				<verse number="11">ಅದಕ್ಕೆ ಯಾಕೋಬನು ತನ್ನ ತಾಯಿ ರೆಬೆಕ್ಕಳಿಗೆ, “ನನ್ನ ಸಹೋದರ ಏಸಾವನು ರೋಮವುಳ್ಳವನಾಗಿದ್ದಾನೆ, ನಾನು ನುಣುಪಾದ ಚರ್ಮವುಳ್ಳವನಾಗಿದ್ದೇನೆ.</verse>
				<verse number="12">ಒಂದು ವೇಳೆ ನನ್ನ ತಂದೆಯು ನನ್ನನ್ನು ಮುಟ್ಟಿದರೆ, ನನ್ನ ಗತಿಯೇನು? ನಾನು ಅವನಿಗೆ ಮೋಸಮಾಡುವವನಾಗಿ ಕಂಡು ಬಂದು, ಆಶೀರ್ವಾದಕ್ಕಿಂತ ಶಾಪವನ್ನೇ ಹೊಂದುವೆನು,” ಎಂದನು.</verse>
				<verse number="13">ಅವನ ತಾಯಿಯು ಅವನಿಗೆ, “ನನ್ನ ಮಗನೇ, ನಿನ್ನ ಶಾಪವು ನನ್ನ ಮೇಲೆ ಇರಲಿ, ನೀನು ಮಾತ್ರ ನನ್ನ ಮಾತಿಗೆ ವಿಧೇಯನಾಗಿ ಹೋಗಿ, ಅವುಗಳನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದಳು.</verse>
				<verse number="14">ಆಗ ಯಾಕೋಬನು ಹೋಗಿ ಅವುಗಳನ್ನು ಹಿಡಿದು ತೆಗೆದುಕೊಂಡು ತನ್ನ ತಾಯಿಗೆ ತಂದುಕೊಟ್ಟನು. ಅವನ ತಾಯಿಯು, ಅವನ ತಂದೆಯು ಇಷ್ಟಪಡುವ ರುಚಿಯಾದ ಅಡಿಗೆಯನ್ನು ಸಿದ್ಧಮಾಡಿದಳು.</verse>
				<verse number="15">ತರುವಾಯ ರೆಬೆಕ್ಕಳು ಮನೆಯಲ್ಲಿದ್ದ ತನ್ನ ಹಿರಿಯ ಮಗನಾದ ಏಸಾವನ ಒಳ್ಳೆಯ ವಸ್ತ್ರವನ್ನು ತೆಗೆದುಕೊಂಡು, ತನ್ನ ಕಿರಿಯ ಮಗ ಯಾಕೋಬನಿಗೆ ಉಡಿಸಿದಳು.</verse>
				<verse number="16">ಇದಲ್ಲದೆ ಮೇಕೆಯ ಮರಿಗಳ ಚರ್ಮಗಳನ್ನು ಅವನ ಕೈಗಳ ಮೇಲೆಯೂ, ನುಣುಪಾದ ಅವನ ಕೊರಳಿನ ಮೇಲೆಯೂ ಕಟ್ಟಿದಳು.</verse>
				<verse number="17">ತರುವಾಯ ತಾನು ಸಿದ್ಧಮಾಡಿದ ರುಚಿಯಾದ ಊಟವನ್ನೂ, ರೊಟ್ಟಿಯನ್ನೂ ತನ್ನ ಮಗ ಯಾಕೋಬನ ಕೈಯಲ್ಲಿ ಕೊಟ್ಟಳು.</verse>
				<verse number="18">ಆಗ ಅವನು ತನ್ನ ತಂದೆಯ ಬಳಿಗೆ ಹೋಗಿ, “ನನ್ನ ತಂದೆಯೇ,” ಎಂದನು. ಅದಕ್ಕೆ ಅವನು, “ನೀನು ಯಾರು?” ಎಂದನು.</verse>
				<verse number="19">ಯಾಕೋಬನು ತನ್ನ ತಂದೆಗೆ, “ನಾನು ನಿನ್ನ ಹಿರಿಯ ಮಗ ಏಸಾವನು. ನೀನು ನನಗೆ ಹೇಳಿದಂತೆ ಮಾಡಿದ್ದೇನೆ, ಎದ್ದು ಕುಳಿತುಕೋ. ನೀನು ನನ್ನನ್ನು ಆಶೀರ್ವದಿಸುವಂತೆ ನನ್ನ ಬೇಟೆಯ ಮಾಂಸವನ್ನು ಊಟಮಾಡು,” ಎಂದನು.</verse>
				<verse number="20">ಇಸಾಕನು ತನ್ನ ಮಗನಿಗೆ, “ನನ್ನ ಮಗನೇ, ಇಷ್ಟು ಬೇಗ ಅದು ನಿನಗೆ ಹೇಗೆ ಸಿಕ್ಕಿತು?” ಎಂದನು. ಅವನು, “ನಿನ್ನ ದೇವರಾದ ಯೆಹೋವ ದೇವರು ನನ್ನೆದುರಿಗೆ ಅದು ಬರುವಂತೆ ಮಾಡಿದರು,” ಎಂದನು.</verse>
				<verse number="21">ಆಗ ಇಸಾಕನು ಯಾಕೋಬನಿಗೆ, “ನನ್ನ ಮಗನೇ, ನೀನೇ ನನ್ನ ಮಗ ಏಸಾವನು ಹೌದೋ, ಅಲ್ಲವೋ ಎಂದು ನಾನು ನಿನ್ನನ್ನು ಮುಟ್ಟಿನೋಡುವಂತೆ ಹತ್ತಿರ ಬಾ,” ಎಂದನು.</verse>
				<verse number="22">ಆಗ ಯಾಕೋಬನು ತನ್ನ ತಂದೆ ಇಸಾಕನ ಹತ್ತಿರ ಬಂದನು. ಇಸಾಕನು ಅವನನ್ನು ಮುಟ್ಟಿ, “ಸ್ವರವು ಯಾಕೋಬನ ಸ್ವರವಾಗಿದೆ, ಆದರೆ ಕೈಗಳು ಏಸಾವನ ಕೈಗಳು,” ಎಂದು ಹೇಳಿದನು.</verse>
				<verse number="23">ಅವನ ಕೈಗಳು ಅವನ ಅಣ್ಣ ಏಸಾವನ ಕೈಗಳಂತೆ ರೋಮಮಯವಾಗಿ ಇದ್ದುದರಿಂದ, ಅವನು ಯಾರೆಂದು ತಿಳಿಯದೆ, ಅವನನ್ನು ಆಶೀರ್ವದಿಸಿದನು.</verse>
				<verse number="24">ಮತ್ತೆ ಅವನು, “ನೀನು ನನ್ನ ಮಗ ಏಸಾವನೋ?” ಎಂದಾಗ. ಯಾಕೋಬನು, “ನಾನೇ,” ಎಂದನು.</verse>
				<verse number="25">ಆಗ ಇಸಾಕನು, “ನನ್ನ ಮಗನೇ, ನೀನು ತಂದದ್ದನ್ನು ಕೊಡು, ಊಟಮಾಡಿ, ನಿನ್ನನ್ನು ಆಶೀರ್ವದಿಸುವೆನು,” ಎಂದನು. ಆಗ ಯಾಕೋಬನು ಅದನ್ನು ಹತ್ತಿರ ತೆಗೆದುಕೊಂಡು ಬಂದಾಗ ಅವನು ಊಟಮಾಡಿದನು. ಅವನು ದ್ರಾಕ್ಷಾರಸವನ್ನು ತಂದಾಗ, ಅದನ್ನು ಕುಡಿದನು.</verse>
				<verse number="26">ಅವನ ತಂದೆ ಇಸಾಕನು ಅವನಿಗೆ, “ನನ್ನ ಮಗನೇ, ಹತ್ತಿರ ಬಂದು ನನಗೆ ಮುದ್ದಿಡು,” ಎಂದನು.</verse>
				<verse number="27">ಆಗ ಯಾಕೋಬನು ಹತ್ತಿರ ಬಂದು ಮುದ್ದಿಟ್ಟನು. ಇಸಾಕನು ಅವನ ವಸ್ತ್ರಗಳ ವಾಸನೆಯನ್ನು ಮೂಸಿ ನೋಡಿ, ಅವನನ್ನು ಹೀಗೆ ಆಶೀರ್ವದಿಸಿದನು, “ನನ್ನ ಮಗನ ವಾಸನೆಯು ಯೆಹೋವ ದೇವರು ಆಶೀರ್ವದಿಸಿದ ಹೊಲದ ವಾಸನೆಯಂತೆ ಇದೆ.</verse>
				<verse number="28">ದೇವರು ನಿನಗೆ ಆಕಾಶದ ಮಂಜನ್ನೂ ಸಾರವುಳ್ಳ ಭೂಮಿಯನ್ನೂ ಸಮೃದ್ಧಿಯಾದ ಧಾನ್ಯವನ್ನೂ ಹೊಸ ದ್ರಾಕ್ಷಾರಸವನ್ನೂ ಕೊಡಲಿ.</verse>
				<verse number="29">ಜನರು ನಿನಗೆ ಸೇವೆಮಾಡಲಿ, ಜನಾಂಗಗಳು ನಿನಗೆ ಅಡ್ಡಬೀಳಲಿ, ನಿನ್ನ ಸಹೋದರರಿಗೆ ನೀನು ದೊರೆಯಾಗಿರು. ನಿನ್ನ ತಾಯಿಯ ಮಕ್ಕಳು ನಿನಗೆ ಅಡ್ಡಬೀಳಲಿ. ನಿನ್ನನ್ನು ಶಪಿಸುವವರಿಗೆ ಶಾಪವೂ ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದವೂ ಆಗಲಿ.”</verse>
				<verse number="30">ಇಸಾಕನು ಯಾಕೋಬನನ್ನು ಆಶೀರ್ವದಿಸಿದ ತರುವಾಯ, ಯಾಕೋಬನು ತನ್ನ ತಂದೆ ಇಸಾಕನ ಸಮ್ಮುಖದಿಂದ ಹೊರಟುಹೋದನು. ಆಮೇಲೆ ಅವನ ಸಹೋದರ ಏಸಾವನು ಬೇಟೆಯಿಂದ ಬಂದನು.</verse>
				<verse number="31">ಅವನೂ ಸಹ ರುಚಿಯಾದ ಊಟವನ್ನು ಸಿದ್ಧಮಾಡಿ, ತನ್ನ ತಂದೆಯ ಬಳಿಗೆ ತಂದು, “ನನ್ನ ತಂದೆಯೇ, ಎದ್ದು ನನ್ನನ್ನು ಆಶೀರ್ವದಿಸುವಂತೆ ನಿನ್ನ ಮಗನ ಬೇಟೆಯ ಮಾಂಸವನ್ನು ಊಟಮಾಡು,” ಎಂದನು.</verse>
				<verse number="32">ಅವನ ತಂದೆ ಇಸಾಕನು ಅವನಿಗೆ, “ನೀನು ಯಾರು?” ಎಂದಾಗ. ಅವನು, “ನಾನು ನಿನ್ನ ಚೊಚ್ಚಲ ಮಗ ಏಸಾವನು,” ಎಂದನು.</verse>
				<verse number="33">ಆಗ ಇಸಾಕನು ಬಹಳವಾಗಿ ನಡುಗುತ್ತಾ, “ನೀನು ಬರುವುದಕ್ಕಿಂತ ಮೊದಲು ಬೇಟೆಯಾಡಿ ನನಗೆ ಊಟ ತಂದವನು ಯಾರು? ಅವನು ಎಲ್ಲಿದ್ದಾನೆ? ನೀನು ಬರುವುದರೊಳಗಾಗಿ ನಾನು ಎಲ್ಲವನ್ನೂ ಊಟಮಾಡಿ ಅವನನ್ನು ಆಶೀರ್ವದಿಸಿದೆನು. ಅವನು ಆಶೀರ್ವಾದ ಹೊಂದಿರುವನು,” ಎಂದನು.</verse>
				<verse number="34">ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿದಾಗ, ವ್ಯಥೆಪಟ್ಟು ಗಟ್ಟಿಯಾದ ಸ್ವರದಿಂದ ಅತ್ತನು. ತನ್ನ ತಂದೆಗೆ, “ತಂದೆಯೇ, ನನ್ನನ್ನು ಕೂಡಾ ಆಶೀರ್ವದಿಸು,” ಎಂದನು.</verse>
				<verse number="35">ಇಸಾಕನು, “ನಿನ್ನ ಸಹೋದರನು ಮೋಸದಿಂದ ಬಂದು ನಿನ್ನ ಆಶೀರ್ವಾದವನ್ನು ತೆಗೆದುಕೊಂಡಿದ್ದಾನೆ,” ಎಂದನು.</verse>
				<verse number="36">ಅದಕ್ಕೆ ಏಸಾವನು, “ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ? ಅವನು ನನ್ನನ್ನು ಎರಡು ಸಾರಿ ವಂಚಿಸಿದ್ದಾನೆ. ಅವನು ನನ್ನ ಚೊಚ್ಚಲತನವನ್ನು ತೆಗೆದುಕೊಂಡಿದ್ದಾನೆ. ಇಗೋ, ಈಗ ನನ್ನ ಆಶೀರ್ವಾದವನ್ನೂ ತೆಗೆದುಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸಲಿಲ್ಲವೋ?” ಎಂದನು.</verse>
				<verse number="37">ಇಸಾಕನು ಉತ್ತರವಾಗಿ ಏಸಾವನಿಗೆ, “ಅವನನ್ನು ನಿನಗೆ ದೊರೆಯನನ್ನಾಗಿ ನೇಮಿಸಿದ್ದೇನೆ, ಅವನ ಸಹೋದರರೆಲ್ಲರನ್ನೂ ಅವನಿಗೆ ಸೇವಕರನ್ನಾಗಿ ಕೊಟ್ಟು, ಧಾನ್ಯದಿಂದಲೂ ಹೊಸ ದ್ರಾಕ್ಷಾರಸದಿಂದಲೂ ಅವನನ್ನು ಪೋಷಿಸಿದ್ದೇನೆ. ಈಗ ನನ್ನ ಮಗನೇ, ನಿನಗೆ ನಾನು ಏನು ಮಾಡಲಿ?” ಎಂದನು.</verse>
				<verse number="38">ಏಸಾವನು ತನ್ನ ತಂದೆಗೆ, “ನನ್ನ ತಂದೆಯೇ, ಆ ಒಂದೇ ಆಶೀರ್ವಾದವು ನಿನಗೆ ಇದೆಯೋ? ತಂದೆಯೇ, ನನ್ನನ್ನೂ ಆಶೀರ್ವದಿಸು,” ಎಂದು ಅವನು ಗಟ್ಟಿಯಾಗಿ ಕೂಗಿ ಅತ್ತನು.</verse>
				<verse number="39">ಆಗ ಅವನ ತಂದೆ ಇಸಾಕನು ಉತ್ತರವಾಗಿ ಅವನಿಗೆ ಹೀಗೆ ಹೇಳಿದನು, “ನಿನ್ನ ನಿವಾಸವು ಭೂಮಿಯ ಐಶ್ವರ್ಯದಿಂದಲೂ ಮೇಲಿನ ಆಕಾಶದಿಂದ ಬೀಳುವ ಮಂಜಿನಿಂದಲೂ ಇರುವುದು.</verse>
				<verse number="40">ನೀನು ಖಡ್ಗದಿಂದಲೇ ಬದುಕುವೆ, ನಿನ್ನ ಸಹೋದರರನ್ನು ನೀನು ಸೇವೆಮಾಡುವೆ, ಆದರೆ ನಿನ್ನ ತಾಳ್ಮೆ ತಪ್ಪಿದಾಗ, ಅವನ ನೊಗವನ್ನು ನಿನ್ನ ಕೊರಳಿನಿಂದ ಮುರಿದುಹಾಕುವೆ.”</verse>
				<verse number="41">ಏಸಾವನು ತನ್ನ ತಂದೆಯು ಅವನಿಗೆ ಕೊಟ್ಟ ಆಶೀರ್ವಾದಕ್ಕೋಸ್ಕರ ಯಾಕೋಬನನ್ನು ದ್ವೇಷಿಸಿದನು. ಏಸಾವನು, “ನನ್ನ ತಂದೆಗೋಸ್ಕರ ದುಃಖಪಡುವ ದಿನಗಳು ಸಮೀಪವಾಗಿವೆ. ತರುವಾಯ ನಾನು ನನ್ನ ಸಹೋದರ ಯಾಕೋಬನನ್ನು ಕೊಲ್ಲುವೆನು,” ಎಂದು ತನ್ನಲ್ಲಿಯೇ ಅಂದುಕೊಂಡನು.</verse>
				<verse number="42">ರೆಬೆಕ್ಕಳಿಗೆ ತನ್ನ ಹಿರಿಯ ಮಗ ಏಸಾವನ ಬಗ್ಗೆ ಗ್ರಹಿಸಿದಾಗ, ಆಕೆಯು ತನ್ನ ಕಿರಿಯ ಮಗ ಯಾಕೋಬನನ್ನು ಕರೆದು ಅವನಿಗೆ, “ನಿನ್ನ ಸಹೋದರ ಏಸಾವನು ನಿನ್ನನ್ನು ಕೊಂದು, ತನ್ನನ್ನು ಸಂತೈಸಿಕೊಳ್ಳುವುದಕ್ಕಿದ್ದಾನೆ.</verse>
				<verse number="43">ಆದ್ದರಿಂದ ಈಗ ನನ್ನ ಮಗನೇ, ನನ್ನ ಮಾತಿಗೆ ವಿಧೇಯನಾಗು. ಎದ್ದು ಹಾರಾನಿನಲ್ಲಿರುವ ನನ್ನ ಸಹೋದರ ಲಾಬಾನನ ಬಳಿಗೆ ಓಡಿಹೋಗು.</verse>
				<verse number="44">ನಿನ್ನ ಸಹೋದರನ ಕೋಪವು ತೀರುವವರೆಗೆ ಕೆಲವು ದಿವಸಗಳು ಅಲ್ಲೇ ಇರು.</verse>
				<verse number="45">ನಿನ್ನ ಕಡೆಗಿರುವ ನಿನ್ನ ಸಹೋದರನ ಕೋಪವು ತೀರಿಹೋಗಿ, ನೀನು ಅವನಿಗೆ ಮಾಡಿದ್ದನ್ನು ಅವನು ಮರೆಯುವವರೆಗೆ ನೀನು ಅಲ್ಲೇ ಇರು. ತರುವಾಯ ನಾನು ನಿನ್ನನ್ನು ಅಲ್ಲಿಂದ ಕರೆಸಿಕೊಳ್ಳುವೆನು. ಒಂದೇ ದಿನದಲ್ಲಿ ನಾನು ನಿಮ್ಮಿಬ್ಬರನ್ನೂ ಕಳೆದುಕೊಳ್ಳುವುದು ಏಕೆ?” ಎಂದಳು.</verse>
				<verse number="46">ರೆಬೆಕ್ಕಳು ಇಸಾಕನಿಗೆ, “ಹಿತ್ತಿಯ ಸ್ತ್ರೀಯರ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ. ಇಂಥ ಹಿತ್ತಿಯ ಸ್ತ್ರೀಯರಲ್ಲಿ ಒಬ್ಬಳನ್ನು ತನ್ನ ಹೆಂಡತಿಯಾಗಿ ಯಾಕೋಬನು ಮದುವೆ ಮಾಡಿಕೊಂಡರೆ, ನಾನು ಬದುಕಿರುವುದು ವ್ಯರ್ಥ,” ಎಂದಳು.</verse>
			</chapter>
			<chapter number="28">
				<verse number="1">ಇಸಾಕನು ಯಾಕೋಬನನ್ನು ಕರೆದು ಆಶೀರ್ವದಿಸಿ ಆಜ್ಞಾಪಿಸಿದ್ದೇನೆಂದರೆ, “ಕಾನಾನ್ಯರ ಸ್ತ್ರೀಯರನ್ನು ನೀನು ಮದುವೆಯಾಗಬಾರದು.</verse>
				<verse number="2">ಕೂಡಲೇ ನಿನ್ನ ತಾಯಿಯ ತಂದೆ ಬೆತೂಯೇಲನು ಇರುವ ಪದ್ದನ್ ಅರಾಮಿಗೆ ಹೋಗು. ನಿನ್ನ ತಾಯಿಯ ಸಹೋದರ ಲಾಬಾನನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಹೆಂಡತಿಯನ್ನಾಗಿ ಮಾಡಿಕೋ.</verse>
				<verse number="3">ಸರ್ವಶಕ್ತ ದೇವರು ನಿನ್ನನ್ನು ಆಶೀರ್ವದಿಸಿ, ನೀನು ದೊಡ್ಡ ಸಮುದಾಯವಾಗುವಂತೆ ನಿನ್ನನ್ನು ಅಭಿವೃದ್ಧಿ ಮಾಡಿ ಹೆಚ್ಚಿಸಲಿ.</verse>
				<verse number="4">ದೇವರು ಅಬ್ರಹಾಮನಿಗೆ ಕೊಟ್ಟಿರುವ ಮತ್ತು ನೀನು ಈಗ ಪ್ರವಾಸಿಯಾಗಿರುವ ದೇಶವನ್ನು ನೀನು ಬಾಧ್ಯವಾಗಿ ಹೊಂದುವಂತೆ ದೇವರು ನಿನ್ನನ್ನು ಆಶೀರ್ವದಿಸಿ, ನಿನಗೂ, ನಿನ್ನ ಸಂತತಿಗೂ ಕೊಡಲಿ,” ಎಂದನು.</verse>
				<verse number="5">ಇಸಾಕನು ಯಾಕೋಬನನ್ನು ಕಳುಹಿಸಿದಾಗ, ಅವನು ಪದ್ದನ್ ಅರಾಮಿನಲ್ಲಿದ್ದ ಯಾಕೋಬನ ಮತ್ತು ಏಸಾವನ ತಾಯಿ ರೆಬೆಕ್ಕಳ ಸಹೋದರ ಅರಾಮಿನವನಾದ ಬೆತೂಯೇಲನ ಮಗನಾಗಿದ್ದ ಲಾಬಾನನ ಬಳಿಗೆ ಹೋದನು.</verse>
				<verse number="6">ಇಸಾಕನು ಯಾಕೋಬನನ್ನು ಆಶೀರ್ವದಿಸಿ, ಅವನಿಗೆ ಹೆಂಡತಿಯನ್ನು ತೆಗೆದುಕೊಳ್ಳುವುದಕ್ಕೆ ಪದ್ದನ್ ಅರಾಮಿಗೆ ಕಳುಹಿಸಿದ್ದನ್ನೂ, ಇಸಾಕನು ಅವನನ್ನು ಆಶೀರ್ವದಿಸುತ್ತಿದ್ದಾಗ, ಅವನಿಗೆ, “ಕಾನಾನ್ಯರ ಪುತ್ರಿಯರಲ್ಲಿ ಹೆಂಡತಿಯನ್ನು ತೆಗೆದುಕೊಳ್ಳಬಾರದು,” ಎಂದು ಆಜ್ಞಾಪಿಸಿದ್ದನ್ನೂ, ಏಸಾವನು ತಿಳಿದುಕೊಂಡನು.</verse>
				<verse number="7">ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ, ಪದ್ದನ್ ಅರಾಮಿಗೆ ಹೋದದ್ದನ್ನೂ</verse>
				<verse number="8">ಕಾನಾನ್ಯರ ಪುತ್ರಿಯರು ತನ್ನ ತಂದೆ ಇಸಾಕನಿಗೆ ಮೆಚ್ಚಿಗೆಯಾಗಲಿಲ್ಲವೆಂದು ಏಸಾವನು ತಿಳಿದು,</verse>
				<verse number="9">ಅವನು ಇಷ್ಮಾಯೇಲನ ಬಳಿಗೆ ಹೋಗಿ, ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗ ಇಷ್ಮಾಯೇಲನ ಮಗಳೂ, ನೆಬಾಯೋತನ ತಂಗಿಯೂ ಆಗಿರುವ ಮಹಲತ್ ಎಂಬವಳನ್ನೂ ಮದುವೆಮಾಡಿಕೊಂಡನು.</verse>
				<verse number="10">ಆಗ ಯಾಕೋಬನು ಬೇರ್ಷೆಬದಿಂದ ಹಾರಾನಿನ ಕಡೆಗೆ ಹೊರಟನು.</verse>
				<verse number="11">ಅವನು ಒಂದು ಸ್ಥಳಕ್ಕೆ ಸೇರಿದಾಗ, ಸೂರ್ಯಾಸ್ತಮವಾದದ್ದರಿಂದ ಅಲ್ಲಿ ಉಳಿದುಕೊಂಡನು. ಅವನು ಅಲ್ಲಿದ್ದ ಕಲ್ಲುಗಳಲ್ಲಿ ಒಂದನ್ನು ತೆಗೆದು ತಲೆ ದಿಂಬನ್ನಾಗಿ ಇಟ್ಟುಕೊಂಡು, ಆ ಸ್ಥಳದಲ್ಲಿ ಮಲಗಿಕೊಂಡನು.</verse>
				<verse number="12">ಆಗ ಅವನು ಒಂದು ಕನಸುಕಂಡನು. ಏಣಿಯು ಭೂಮಿಯ ಮೇಲೆ ನಿಂತಿತ್ತು. ಅದರ ತುದಿಯು ಪರಲೋಕಕ್ಕೆ ಮುಟ್ಟಿತ್ತು. ದೇವದೂತರು ಅದರ ಮೇಲೆ ಏರುತ್ತಾ ಇಳಿಯುತ್ತಾ ಇದ್ದರು.</verse>
				<verse number="13">ಇದಲ್ಲದೆ ಯೆಹೋವ ದೇವರು ಅದರ ಮೇಲೆ ನಿಂತುಕೊಂಡು, “ನಿನ್ನ ತಂದೆ ಅಬ್ರಹಾಮನ ದೇವರೂ, ಇಸಾಕನ ದೇವರೂ ಆದ ಯೆಹೋವ ದೇವರು ನಾನೇ. ನೀನು ಮಲಗಿರುವ ಭೂಮಿಯನ್ನು ನಿನಗೂ, ನಿನ್ನ ಸಂತತಿಗೂ ಕೊಡುವೆನು.</verse>
				<verse number="14">ನಿನ್ನ ಸಂತತಿಯು ಭೂಮಿಯ ಧೂಳಿನಂತೆ ಅಸಂಖ್ಯವಾಗುವುದು. ನೀನು ಪೂರ್ವ, ಪಶ್ಚಿಮ, ದಕ್ಷಿಣೋತ್ತರಗಳಿಗೆ ಹರಡಿಕೊಳ್ಳುವೆ. ನಿನ್ನಿಂದಲೂ ನಿನ್ನ ಸಂತತಿಯಿಂದಲೂ ಭೂಮಿಯ ಎಲ್ಲಾ ಜನರು ಆಶೀರ್ವಾದ ಹೊಂದುವರು.</verse>
				<verse number="15">ಇಗೋ, ನಾನು ನಿನ್ನ ಸಂಗಡ ಇದ್ದು, ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಪಾಡಿ, ಈ ದೇಶಕ್ಕೆ ನಿನ್ನನ್ನು ತಿರುಗಿ ಬರಮಾಡುವೆನು. ಏಕೆಂದರೆ ನಾನು ನಿನಗೆ ಹೇಳಿದ್ದನ್ನು ಮಾಡುವವರೆಗೆ ನಿನ್ನನ್ನು ಬಿಡುವುದಿಲ್ಲ,” ಎಂದರು.</verse>
				<verse number="16">ತರುವಾಯ ಯಾಕೋಬನು ನಿದ್ರೆಯಿಂದ ಎಚ್ಚೆತ್ತು, “ನಿಶ್ಚಯವಾಗಿ ಈ ಸ್ಥಳದಲ್ಲಿ ಯೆಹೋವ ದೇವರು ಇದ್ದಾರೆ. ಇದನ್ನು ನಾನು ಅರಿಯಲಿಲ್ಲ,” ಎಂದನು.</verse>
				<verse number="17">ಅವನು ಭಯಪಟ್ಟು, “ಈ ಸ್ಥಳವು ಎಷ್ಟೋ ಗಂಭೀರವಾದದ್ದು, ಇದು ದೇವರ ಮನೆಯೇ ಹೊರತು ಬೇರೆಯಲ್ಲ. ಇದೇ ಪರಲೋಕದ ಬಾಗಿಲು,” ಎಂದನು.</verse>
				<verse number="18">ಯಾಕೋಬನು ಬೆಳಿಗ್ಗೆ ಎದ್ದು, ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು, ಅದನ್ನು ಸ್ತಂಭವಾಗಿ ನೆಟ್ಟು, ಅದರ ಮೇಲೆ ಎಣ್ಣೆಯನ್ನು ಹೊಯ್ದನು.</verse>
				<verse number="19">ಇದಲ್ಲದೆ ಅವನು ಆ ಸ್ಥಳಕ್ಕೆ, ಬೇತೇಲ್, ಎಂದು ಹೆಸರಿಟ್ಟನು. ಅದಕ್ಕಿಂತ ಮೊದಲು ಆ ಸ್ಥಳಕ್ಕೆ, ಲೂಜ್ ಎಂದು ಹೆಸರಿತ್ತು.</verse>
				<verse number="20">ಆಗ ಯಾಕೋಬನು ಪ್ರಮಾಣಮಾಡಿ, “ದೇವರು ನನ್ನ ಸಂಗಡ ಇದ್ದು, ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ, ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ ನನಗೆ ಕೊಟ್ಟು,</verse>
				<verse number="21">ನನ್ನನ್ನು ಸಮಾಧಾನವಾಗಿ ನನ್ನ ತಂದೆಯ ಮನೆಗೆ ತಿರುಗಿ ಬರಮಾಡಿದರೆ, ಯೆಹೋವ ನನಗೆ ದೇವರಾಗಿರುವರು.</verse>
				<verse number="22">ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವುದು. ಆಗ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ದೇವರಿಗೆ ನಾನು ಖಂಡಿತವಾಗಿ ಕೊಡುವೆನು,” ಎಂದನು.</verse>
			</chapter>
			<chapter number="29">
				<verse number="1">ಆಗ ಯಾಕೋಬನು ಪ್ರಯಾಣವನ್ನು ಮುಂದುವರಿಸುತ್ತಾ ಪೂರ್ವದಿಕ್ಕಿನ ಜನರ ದೇಶಕ್ಕೆ ಬಂದನು.</verse>
				<verse number="2">ಅವನು ಕಣ್ಣೆತ್ತಿ ನೋಡಲಾಗಿ, ಹೊಲದಲ್ಲಿ ಒಂದು ಬಾವಿ ಇತ್ತು. ಅದರ ಸಮೀಪದಲ್ಲಿ ಮೂರು ಕುರಿಮಂದೆಗಳು ಮಲಗಿದ್ದವು. ಏಕೆಂದರೆ ಆ ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಆ ಬಾವಿಯ ಮೇಲೆ ಒಂದು ದೊಡ್ಡ ಕಲ್ಲು ಇತ್ತು.</verse>
				<verse number="3">ಅಲ್ಲಿ ಮಂದೆಗಳೆಲ್ಲಾ ಕೂಡಿದಾಗ, ಬಾವಿಯ ಮೇಲಿದ್ದ ಕಲ್ಲನ್ನು ಉರುಳಿಸಿ, ಕುರಿಗಳಿಗೆ ನೀರನ್ನು ಕುಡಿಸಿ, ಕಲ್ಲನ್ನು ಮತ್ತೆ ಅದರ ಸ್ಥಳದಲ್ಲಿ ಇಡುತ್ತಿದ್ದರು.</verse>
				<verse number="4">ಯಾಕೋಬನು ಅವರಿಗೆ, “ನನ್ನ ಸಹೋದರರೇ, ನೀವು ಎಲ್ಲಿಯವರು?” ಎಂದಾಗ. ಅವರು, “ನಾವು ಹಾರಾನಿನವರು,” ಎಂದರು.</verse>
				<verse number="5">ಅದಕ್ಕವನು ಅವರಿಗೆ, “ನಾಹೋರನ ಮೊಮ್ಮಗ ಲಾಬಾನನನ್ನು ನೀವು ಬಲ್ಲಿರೋ?” ಎಂದಾಗ. ಅವರು, “ನಾವು ಅವನನ್ನು ಬಲ್ಲೆವು,” ಎಂದರು.</verse>
				<verse number="6">ಯಾಕೋಬನು ಅವರಿಗೆ, “ಅವನು ಕ್ಷೇಮವಾಗಿದ್ದಾನೋ?” ಎಂದು ಕೇಳಿದಾಗ, ಆಗ ಅವರು, “ಕ್ಷೇಮವಾಗಿದ್ದಾನೆ, ಅಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ,” ಎಂದರು.</verse>
				<verse number="7">ಯಾಕೋಬನು ಅವರಿಗೆ, “ಇನ್ನೂ ಬಹಳ ಹೊತ್ತು ಇದೆ. ಮಂದೆಗಳನ್ನು ಕೂಡಿಸುವ ಸಮಯವು ಇದಲ್ಲ. ಕುರಿಗಳಿಗೆ ನೀರು ಕುಡಿಸಿ ಹೋಗಿ ಮೇಯಿಸಿರಿ,” ಎಂದನು.</verse>
				<verse number="8">ಅದಕ್ಕೆ ಅವರು, “ಮಂದೆಗಳನ್ನೆಲ್ಲಾ ಒಟ್ಟುಗೂಡಿಸಿದ ಮೇಲೆ ಬಾವಿಯ ಮೇಲಿರುವ ಕಲ್ಲನ್ನು ಉರುಳಿಸುತ್ತಾರೆ. ಆಗ ನಾವು ಕುರಿಗಳಿಗೆ ನೀರನ್ನು ಕುಡಿಸುತ್ತೇವೆ,” ಎಂದರು.</verse>
				<verse number="9">ಯಾಕೋಬನು ಇನ್ನೂ ಅವರ ಸಂಗಡ ಮಾತನಾಡುತ್ತಿದ್ದಾಗ, ಕುರಿಗಳನ್ನು ಮೇಯಿಸುವ ರಾಹೇಲಳು ತನ್ನ ತಂದೆಯ ಕುರಿಗಳ ಸಂಗಡ ಬಂದಳು.</verse>
				<verse number="10">ಯಾಕೋಬನು ತನ್ನ ತಾಯಿಯ ಸಹೋದರ ಲಾಬಾನನ ಮಗಳಾದ ರಾಹೇಲಳನ್ನೂ, ಅವಳ ಕುರಿಗಳನ್ನೂ ನೋಡಿದಾಗ, ಯಾಕೋಬನು ಹತ್ತಿರ ಬಂದು, ಬಾವಿಯ ಮೇಲಿದ್ದ ಕಲ್ಲನ್ನು ಹೊರಳಿಸಿ, ತನ್ನ ತಾಯಿಯ ಸಹೋದರನಾದ ಲಾಬಾನನ ಕುರಿಗಳಿಗೆ ನೀರನ್ನು ಕುಡಿಸಿದನು.</verse>
				<verse number="11">ಆಗ ಯಾಕೋಬನು ರಾಹೇಲಳಿಗೆ ಮುದ್ದಿಟ್ಟು, ತನ್ನ ಸ್ವರವನ್ನೆತ್ತಿ ಗಟ್ಟಿಯಾಗಿ ಅತ್ತನು.</verse>
				<verse number="12">ಯಾಕೋಬನು ರಾಹೇಲಳಿಗೆ, ತಾನು ಆಕೆಯ ತಂದೆಗೆ ಸೋದರಳಿಯನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ಆಕೆಯು ಓಡಿಹೋಗಿ ತನ್ನ ತಂದೆಗೆ ತಿಳಿಸಿದಳು.</verse>
				<verse number="13">ಲಾಬಾನನು ತನ್ನ ಸಹೋದರಿಯ ಮಗ ಯಾಕೋಬನ ಸುದ್ದಿಯನ್ನು ಕೇಳಿದಾಗ, ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು ಅವನನ್ನು ಅಪ್ಪಿಕೊಂಡು ಮುದ್ದಿಟ್ಟನು. ಅವನನ್ನು ಮನೆಗೆ ಕರೆದುಕೊಂಡು ಬಂದನು. ಅವನು ಲಾಬಾನನಿಗೆ ಎಲ್ಲಾ ವಿಷಯಗಳನ್ನು ತಿಳಿಸಿದನು.</verse>
				<verse number="14">ಆಗ ಲಾಬಾನನು ಅವನಿಗೆ, “ನಿಶ್ಚಯವಾಗಿ ನೀನು ನನ್ನ ರಕ್ತಸಂಬಂಧಿಯಾಗಿದ್ದೀ,” ಎಂದನು. ಯಾಕೋಬನು ಅವನ ಸಂಗಡ ಒಂದು ತಿಂಗಳು ವಾಸವಾಗಿದ್ದನು.</verse>
				<verse number="15">ಲಾಬಾನನು ಯಾಕೋಬನಿಗೆ, “ನೀನು ನನ್ನ ಸಂಬಂಧಿಕನಾಗಿರುವುದರಿಂದ ಸುಮ್ಮನೆ ನನಗೆ ಸೇವೆ ಮಾಡಬೇಕೆ? ನಿನ್ನ ಸಂಬಳ ಎಷ್ಟೆಂಬುದನ್ನು ನನಗೆ ಹೇಳು?” ಎಂದನು.</verse>
				<verse number="16">ಲಾಬಾನನಿಗೆ ಇಬ್ಬರು ಪುತ್ರಿಯರಿದ್ದರು. ದೊಡ್ಡವಳ ಹೆಸರು ಲೇಯಳು, ಚಿಕ್ಕವಳ ಹೆಸರು ರಾಹೇಲಳು.</verse>
				<verse number="17">ಲೇಯಳ ಕಣ್ಣುಗಳು ಕಾಂತಿಹೀನವಾಗಿದ್ದವು. ಆದರೆ ರಾಹೇಲಳು ಸುಂದರಿಯೂ ರೂಪವತಿಯೂ ಆಗಿದ್ದಳು.</verse>
				<verse number="18">ಹೀಗಿರುವುದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಸಿ, “ನಾನು ನಿನ್ನ ಕಿರಿ ಮಗಳಾಗಿರುವ ರಾಹೇಲಳಿಗೋಸ್ಕರ ನಿಮ್ಮಲ್ಲಿ ಏಳು ವರ್ಷ ಸೇವೆ ಮಾಡುತ್ತೇನೆ,” ಎಂದನು.</verse>
				<verse number="19">ಅದಕ್ಕೆ ಲಾಬಾನನು, “ಅವಳನ್ನು ಬೇರೊಬ್ಬನಿಗೆ ಕೊಡುವುದಕ್ಕಿಂತ, ನಿನಗೆ ಕೊಡುವುದು ಒಳ್ಳೆಯದು. ಆದ್ದರಿಂದ ನನ್ನ ಸಂಗಡವಿರು,” ಎಂದನು.</verse>
				<verse number="20">ಈ ಪ್ರಕಾರ ಯಾಕೋಬನು ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡಿದನು. ಅವನು ಆಕೆಯನ್ನು ಪ್ರೀತಿಮಾಡಿದ್ದರಿಂದ ಏಳು ವರ್ಷಗಳು ಅವನಿಗೆ ಸ್ವಲ್ಪದಿನಗಳಾಗಿ ತೋರಿದವು.</verse>
				<verse number="21">ತರುವಾಯ ಯಾಕೋಬನು ಲಾಬಾನನಿಗೆ, “ನನ್ನ ಸೇವಾ ದಿನಗಳು ಪೂರ್ತಿಯಾದವು. ನಾನು ನನ್ನ ಹೆಂಡತಿಯೊಂದಿಗೆ ಬಾಳುವಂತೆ ಆಕೆಯನ್ನು ನನಗೆ ಕೊಡು,” ಎಂದನು.</verse>
				<verse number="22">ಆಗ ಲಾಬಾನನು ಆ ಸ್ಥಳದ ಮನುಷ್ಯರನ್ನೆಲ್ಲಾ ಕೂಡಿಸಿ ಔತಣ ಮಾಡಿಸಿದನು.</verse>
				<verse number="23">ರಾತ್ರಿಯಾದಾಗ ಅವನು ತನ್ನ ಮಗಳಾದ ಲೇಯಳನ್ನು ಯಾಕೋಬನ ಬಳಿಗೆ ಕರೆತಂದನು. ಆಗ ಅವನು ಲೇಯಳ ಬಳಿಗೆ ಬಂದನು.</verse>
				<verse number="24">ಇದಲ್ಲದೆ ಲಾಬಾನನು ತನ್ನ ದಾಸಿಯಾದ ಜಿಲ್ಪಳನ್ನು, ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟನು.</verse>
				<verse number="25">ಬೆಳಿಗ್ಗೆ ನೋಡಲಾಗಿ ಆಕೆಯು ಲೇಯಳಾಗಿದ್ದಳು. ಆಗ ಯಾಕೋಬನು ಲಾಬಾನನಿಗೆ, “ಇದೇನು ನೀನು ನನಗೆ ಮಾಡಿದೆ? ರಾಹೇಲಳಿಗೋಸ್ಕರ ನಾನು ನಿನಗೆ ಸೇವೆಮಾಡಿದೆನಲ್ಲಾ? ಏಕೆ ನನಗೆ ಮೋಸಮಾಡಿದೆ?” ಎಂದನು.</verse>
				<verse number="26">ಅದಕ್ಕೆ ಲಾಬಾನನು, “ಹಿರಿಯಳಿಗಿಂತ ಮೊದಲು ಕಿರಿಯಳನ್ನು ಮದುವೆ ಮಾಡಿಕೊಡುವುದು ನಮ್ಮ ಪದ್ಧತಿಯಲ್ಲ.</verse>
				<verse number="27">ಹಿರಿಯಳೊಡನೆ ಈ ವಾರವನ್ನು ಪೂರೈಸು. ತರುವಾಯ ನೀನು ಇನ್ನು ಬೇರೆ ಏಳು ವರ್ಷಗಳವರೆಗೆ ಸೇವೆ ಮಾಡಲು ಒಪ್ಪಿಕೊಂಡರೆ, ನಾನು ಕಿರಿಯ ಮಗಳನ್ನು ನಿನಗೆ ಕೊಡುತ್ತೇನೆ,” ಎಂದನು.</verse>
				<verse number="28">ಯಾಕೋಬನು ಅದರಂತೆ ಮಾಡಿ, ವಾರವನ್ನು ಪೂರೈಸಿದನು. ಆಗ ಲಾಬಾನನು ತನ್ನ ಮಗಳಾದ ರಾಹೇಲಳನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು.</verse>
				<verse number="29">ಲಾಬಾನನು ತನ್ನ ಮಗಳಾದ ರಾಹೇಲಳಿಗೆ, ತನ್ನ ದಾಸಿಯಾದ ಬಿಲ್ಹಳನ್ನು ದಾಸಿಯಾಗಿ ಕೊಟ್ಟನು.</verse>
				<verse number="30">ಯಾಕೋಬನು ರಾಹೇಲಳೊಂದಿಗೆ ಕೂಡಿ, ಲೇಯಳಿಗಿಂತ ರಾಹೇಲಳನ್ನು ಹೆಚ್ಚು ಪ್ರೀತಿಸಿದನು. ಇನ್ನೂ ಏಳು ವರ್ಷ ಲಾಬಾನನ ಬಳಿಯಲ್ಲಿ ಸೇವೆ ಮಾಡಿದನು.</verse>
				<verse number="31">ಲೇಯಳು ತಾತ್ಸಾರಕ್ಕೆ ತುತ್ತಾಗುವಳೆಂದು ಯೆಹೋವ ದೇವರು ಕಂಡು, ಅವಳು ಗರ್ಭಿಣಿಯಾಗುವಂತೆ ಅನುಗ್ರಹಮಾಡಿದರು. ಆದರೆ ರಾಹೇಲಳು ಬಂಜೆಯಾಗಿದ್ದಳು.</verse>
				<verse number="32">ಲೇಯಳು ಗರ್ಭಿಣಿಯಾಗಿ ಮಗನನ್ನು ಹೆತ್ತು, “ನಿಜವಾಗಿ ಯೆಹೋವ ದೇವರು ನನ್ನ ಬಾಧೆಯನ್ನು ನೋಡಿದ್ದಾರೆ. ಆದ್ದರಿಂದ ನನ್ನ ಗಂಡನು ನನ್ನನ್ನು ಪ್ರೀತಿ ಮಾಡುವನು,” ಎಂದು ಹೇಳಿ ಮಗುವಿಗೆ ರೂಬೇನ್ ಎಂದು ಹೆಸರಿಟ್ಟಳು.</verse>
				<verse number="33">ಲೇಯಳು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು, “ನಾನು ತಾತ್ಸಾರವಾಗಿದ್ದೆ ಎಂದು ಯೆಹೋವ ದೇವರು ಕೇಳಿ, ಇವನನ್ನು ನನಗೆ ಕೊಟ್ಟಿದ್ದಾರೆ,” ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.</verse>
				<verse number="34">ಮತ್ತೊಮ್ಮೆ ಲೇಯಳು ಮಗನನ್ನು ಹೆತ್ತು, “ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಏಕೆಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ,” ಎಂದು ಹೇಳಿ, ಆ ಮಗುವಿಗೆ ಲೇವಿ ಎಂದು ಹೆಸರಿಟ್ಟಳು.</verse>
				<verse number="35">ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು, “ಈಗ ನಾನು ಯೆಹೋವ ದೇವರನ್ನು ಸ್ತುತಿಸುವೆನು,” ಎಂದು ಹೇಳಿ, ಅವನಿಗೆ ಯೆಹೂದ ಎಂದು ಹೆಸರಿಟ್ಟಳು. ಆಮೇಲೆ ಆಕೆಗೆ ಮಕ್ಕಳಾಗಲಿಲ್ಲ.</verse>
			</chapter>
			<chapter number="30">
				<verse number="1">ರಾಹೇಲಳು ತಾನು ಯಾಕೋಬನಿಗೆ ಮಕ್ಕಳನ್ನು ಹೆರಲಿಲ್ಲ ಎಂದು ತಿಳಿದಾಗ, ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೆಕಿಚ್ಚು ಪಟ್ಟು ಯಾಕೋಬನಿಗೆ, “ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ,” ಎಂದಳು.</verse>
				<verse number="2">ಅದಕ್ಕೆ ಯಾಕೋಬನು ರಾಹೇಲಳ ಮೇಲೆ ಕೋಪಿಸಿಕೊಂಡು, “ನಿನಗೆ ಗರ್ಭ ಫಲವನ್ನು ಕೊಡುವ ದೇವರ ಸ್ಥಾನದಲ್ಲಿ ನಾನಿದ್ದೇನೋ?” ಎಂದನು.</verse>
				<verse number="3">ಅದಕ್ಕೆ ಆಕೆಯು, “ನನ್ನ ದಾಸಿ ಬಿಲ್ಹಳು ಇದ್ದಾಳೆ, ಅವಳ ಬಳಿಗೆ ಹೋಗು, ಅವಳು ಹೆತ್ತು ನನ್ನ ಮಡಿಲಲ್ಲಿ ಇಡಲಿ. ಅವಳಿಂದ ನನಗೆ ಮಕ್ಕಳಾಗುವರು,” ಎಂದಳು.</verse>
				<verse number="4">ಹೀಗೆ ಅವನಿಗೆ ತನ್ನ ದಾಸಿ ಬಿಲ್ಹಳನ್ನು ಕೊಟ್ಟಳು. ಯಾಕೋಬನು ಅವಳನ್ನು ಸ್ವೀಕರಿಸಿದನು.</verse>
				<verse number="5">ಬಿಲ್ಹಳು ಗರ್ಭಿಣಿಯಾಗಿ, ಯಾಕೋಬನಿಗೆ ಮಗನನ್ನು ಹೆತ್ತಳು.</verse>
				<verse number="6">ರಾಹೇಲಳು, “ದೇವರು ನನಗೆ ನ್ಯಾಯತೀರಿಸಿ, ನನ್ನ ಸ್ವರವನ್ನು ಕೇಳಿ, ನನಗೆ ಮಗನನ್ನು ಕೊಟ್ಟಿದ್ದಾರೆ,” ಎಂದು ಹೇಳಿದಳು. ಆದ್ದರಿಂದ ಆಕೆಯು ಅವನಿಗೆ ದಾನ್ ಎಂದು ಹೆಸರಿಟ್ಟಳು.</verse>
				<verse number="7">ರಾಹೇಲಳ ದಾಸಿ ಬಿಲ್ಹಳು ಮತ್ತೆ ಗರ್ಭಿಣಿಯಾಗಿ, ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.</verse>
				<verse number="8">ಆಗ ರಾಹೇಲಳು, “ಅಧಿಕವಾದ ಹೋರಾಟಗಳಿಂದ ನನ್ನ ಸಹೋದರಿಯ ಸಂಗಡ ಹೋರಾಡಿ ಜಯಿಸಿದ್ದೇನೆ,” ಎಂದು ಹೇಳಿ ಅವನಿಗೆ ನಫ್ತಾಲಿ ಎಂದು ಹೆಸರಿಟ್ಟಳು.</verse>
				<verse number="9">ಲೇಯಳು ತಾನು ಹೆರುವುದು ನಿಂತಿತೆಂದು ತಿಳಿದು, ತನ್ನ ದಾಸಿ ಜಿಲ್ಪಳನ್ನು ಯಾಕೋಬನಿಗೆ ಹೆಂಡತಿಯಾಗಿ ಕೊಟ್ಟಳು.</verse>
				<verse number="10">ಲೇಯಳ ದಾಸಿ ಜಿಲ್ಪಳು ಯಾಕೋಬನಿಗೆ ಮಗನನ್ನು ಹೆತ್ತಳು.</verse>
				<verse number="11">ಆಗ ಲೇಯಳು, “ಎಂಥಾ ಸೌಭಾಗ್ಯ,” ಎಂದು ಹೇಳಿ ಅವನಿಗೆ ಗಾದ್ ಎಂದು ಹೆಸರಿಟ್ಟಳು.</verse>
				<verse number="12">ಲೇಯಳ ದಾಸಿ ಜಿಲ್ಪಳು ಯಾಕೋಬನಿಗೆ ಎರಡನೆಯ ಮಗನನ್ನು ಹೆತ್ತಳು.</verse>
				<verse number="13">ಆಗ ಲೇಯಳು, “ನಾನು ಧನ್ಯಳಾದೆನು, ಏಕೆಂದರೆ ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯುವರು,” ಎಂದು ಹೇಳಿ ಅವನಿಗೆ ಆಶೇರ್ ಎಂದು ಹೆಸರಿಟ್ಟಳು.</verse>
				<verse number="14">ರೂಬೇನನು ಗೋಧಿ ಕೊಯ್ಯುವ ಕಾಲದಲ್ಲಿ ಹೋಗಿ, ಹೊಲದಲ್ಲಿ ದುದಾಯಿ ಫಲಗಳನ್ನು ಕಂಡು, ತಾಯಿ ಲೇಯಳ ಬಳಿಗೆ ಕೆಲವು ಫಲಗಳನ್ನು ತಂದಾಗ, ರಾಹೇಲಳು ಲೇಯಳಿಗೆ, “ನಿನ್ನ ಮಗನು ತಂದ ಫಲಗಳಲ್ಲಿ ಕೆಲವನ್ನು ನನಗೆ ಕೊಡು,” ಎಂದಳು.</verse>
				<verse number="15">ಅದಕ್ಕೆ ಆಕೆಯು, “ನೀನು ನನ್ನ ಗಂಡನನ್ನು ತೆಗೆದುಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯ ಫಲಗಳನ್ನು ಸಹ ತೆಗೆದುಕೊಳ್ಳುವಿಯೋ?” ಎಂದಳು. ಅದಕ್ಕೆ ರಾಹೇಲಳು, “ನಿನ್ನ ಮಗನು ತಂದ ದುದಾಯ ಫಲಗಳಿಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ,” ಎಂದಳು.</verse>
				<verse number="16">ಯಾಕೋಬನು ಸಾಯಂಕಾಲದಲ್ಲಿ ಹೊಲದಿಂದ ಬಂದಾಗ, ಲೇಯಳು ಅವನೆದುರಿಗೆ ಹೋಗಿ, “ನೀನು ನನ್ನ ಬಳಿಗೆ ಬರಬೇಕು. ನನ್ನ ಮಗನು ತಂದ ದುದಾಯಿ ಫಲಗಳನ್ನು ಕೊಟ್ಟು ನಿನ್ನನ್ನು ಸಂಪಾದಿಸಿಕೊಂಡಿದ್ದೇನೆ,” ಎಂದಳು. ಆದ್ದರಿಂದ ಅವನು ಆ ರಾತ್ರಿಯಲ್ಲಿ ಆಕೆಯ ಸಂಗಡ ಮಲಗಿದನು.</verse>
				<verse number="17">ಆಗ ದೇವರು ಲೇಯಳ ಪ್ರಾರ್ಥನೆಯನ್ನು ಕೇಳಿದ್ದರಿಂದ, ಆಕೆಯು ಗರ್ಭಿಣಿಯಾಗಿ ಯಾಕೋಬನಿಗೆ ಐದನೆಯ ಮಗನನ್ನು ಹೆತ್ತಳು.</verse>
				<verse number="18">ಲೇಯಳು, “ನಾನು ನನ್ನ ಗಂಡನಿಗೆ ನನ್ನ ದಾಸಿಯನ್ನು ಕೊಟ್ಟಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾರೆ,” ಎಂದು ಹೇಳಿ, ಅವನಿಗೆ ಇಸ್ಸಾಕಾರ್ ಎಂದು ಹೆಸರಿಟ್ಟಳು.</verse>
				<verse number="19">ಮತ್ತೊಂದು ಸಾರಿ ಲೇಯಳು ಗರ್ಭಿಣಿಯಾಗಿ ಯಾಕೋಬನಿಗೆ ಆರನೆಯ ಮಗನನ್ನು ಹೆತ್ತಳು,</verse>
				<verse number="20">ಲೇಯಳು, “ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾರೆ. ಈಗ ನಾನು ಅವನಿಗೆ ಆರು ಮಕ್ಕಳನ್ನು ಹೆತ್ತದ್ದರಿಂದ, ನನ್ನ ಗಂಡನು ಈಗಲಾದರೂ ನನ್ನನ್ನು ಗೌರವಿಸುವನು,” ಎಂದು ಹೇಳಿ, ಅವನಿಗೆ ಜೆಬುಲೂನ್ ಎಂದು ಹೆಸರಿಟ್ಟಳು.</verse>
				<verse number="21">ತರುವಾಯ ಆಕೆಯು ಒಬ್ಬ ಮಗಳನ್ನು ಹೆತ್ತು, ಆಕೆಗೆ ದೀನಾ ಎಂದು ಹೆಸರಿಟ್ಟಳು.</verse>
				<verse number="22">ಆಗ ದೇವರು ರಾಹೇಲಳನ್ನು ಜ್ಞಾಪಕಮಾಡಿಕೊಂಡರು. ದೇವರು ಆಕೆಯ ಮೊರೆಯನ್ನು ಕೇಳಿ, ಆಕೆಗೆ ಮಕ್ಕಳಾಗುವಂತೆ ಅನುಗ್ರಹಮಾಡಿದರು.</verse>
				<verse number="23">ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು, “ದೇವರು ನನ್ನ ನಿಂದೆಯನ್ನು ತೆಗೆದುಬಿಟ್ಟಿದ್ದಾರೆ,” ಎಂದಳು.</verse>
				<verse number="24">ಆಕೆಯು, “ಯೆಹೋವ ದೇವರು ನನಗೆ ಮತ್ತೊಬ್ಬ ಮಗನನ್ನು ದಯಪಾಲಿಸುವರು,” ಎಂದು ಹೇಳಿ ಅವನಿಗೆ ಯೋಸೇಫ ಎಂದು ಹೆಸರಿಟ್ಟಳು.</verse>
				<verse number="25">ರಾಹೇಲಳು ಯೋಸೇಫನನ್ನು ಹೆತ್ತಾಗ ಯಾಕೋಬನು ಲಾಬಾನನಿಗೆ, “ನಾನು ನನ್ನ ಸ್ಥಳಕ್ಕೂ ಸ್ವದೇಶಕ್ಕೂ ಹೋಗುವಂತೆ ನನ್ನನ್ನು ಕಳುಹಿಸಿಕೊಡು.</verse>
				<verse number="26">ನಾನು ಯಾರಿಗೋಸ್ಕರ ನಿನಗೆ ಸೇವೆ ಮಾಡಿದೆನೋ, ಆ ನನ್ನ ಹೆಂಡತಿಯರನ್ನೂ, ನನ್ನ ಮಕ್ಕಳನ್ನೂ ನನ್ನೊಂದಿಗೆ ಕಳುಹಿಸಿಕೊಡು. ನಾನು ನಿನಗೆ ಮಾಡಿದ ಸೇವೆಯನ್ನು ನೀನು ಬಲ್ಲವನಾಗಿದ್ದೀಯೆ,” ಎಂದನು.</verse>
				<verse number="27">ಲಾಬಾನನು ಅವನಿಗೆ, “ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವನಾಗಿದ್ದರೆ, ನನ್ನ ಬಳಿಯಲ್ಲಿಯೇ ಇರು. ಏಕೆಂದರೆ ಯೆಹೋವ ದೇವರು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾರೆಂದು ನಾನು ಭವಿಷ್ಯಜ್ಞಾನ ಅನುಭವದಿಂದ ಕಲಿತುಕೊಂಡಿದ್ದೇನೆ.</verse>
				<verse number="28">ನೀನು ನಿನ್ನ ಸಂಬಳವನ್ನು ನಿರ್ಣಯಿಸು. ಅದನ್ನು ನಾನು ನಿನಗೆ ಕೊಡುವೆನು,” ಎಂದನು.</verse>
				<verse number="29">ಅದಕ್ಕೆ ಯಾಕೋಬನು ಅವನಿಗೆ, “ನಾನು ನಿನಗೆ ಮಾಡಿದ ಸೇವೆಯನ್ನೂ, ನಿನ್ನ ಪಶುಗಳು ನನ್ನ ಬಳಿಯಲ್ಲಿ ಹೇಗೆ ಅಭಿವೃದ್ಧಿ ಆಗಿವೆ ಎಂಬುದನ್ನೂ ನೀನು ಬಲ್ಲೆ.</verse>
				<verse number="30">ನಾನು ಬರುವುದಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ. ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಯೆಹೋವ ದೇವರು ನಿನ್ನನ್ನು ಆಶೀರ್ವದಿಸಿದ್ದಾರೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ?” ಎಂದನು.</verse>
				<verse number="31">ಅದಕ್ಕೆ ಲಾಬಾನನು, “ನಿನಗೆ ನಾನು ಏನು ಕೊಡಲಿ?” ಎಂದನು. ಯಾಕೋಬನು, “ಏನೂ ಕೊಡಬೇಡ, ಒಂದು ವಿಷಯದಲ್ಲಿ ಒಪ್ಪಿಕೊಂಡರೆ, ನಾನು ಮತ್ತೆ ನಿನ್ನ ಮಂದೆಯನ್ನು ಮೇಯಿಸಿ ಕಾಯುವೆನು.</verse>
				<verse number="32">ಈ ಹೊತ್ತು ನಾನು ನಿನ್ನ ಎಲ್ಲಾ ಮಂದೆಯ ಮಧ್ಯದಲ್ಲಿ ಹಾದು ಹೋಗುವೆನು. ಕುರಿಗಳಲ್ಲಿ ಕಂದುಬಣ್ಣದವುಗಳನ್ನೆಲ್ಲಾ, ಮೇಕೆಗಳಲ್ಲಿ ಚುಕ್ಕೆ ಮತ್ತು ಮಚ್ಚೆ ಉಳ್ಳವುಗಳನ್ನೆಲ್ಲಾ ಬೇರೆ ಮಾಡುವೆನು. ಅವೇ ನನ್ನ ಕೂಲಿಯಾಗಿರಲಿ.</verse>
				<verse number="33">ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ, ನನ್ನ ಪ್ರಾಮಾಣಿಕತೆಯೇ ನನಗೆ ಸಾಕ್ಷಿಕೊಡುವುದು. ಮೇಕೆಗಳಲ್ಲಿ ಚುಕ್ಕೆ ಮತ್ತು ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳು ನನ್ನ ಬಳಿಯಲ್ಲಿದ್ದರೆ, ಅವು ಕದ್ದವುಗಳು ಎಂದು ಎಣಿಕೆಯಾಗಿರಲಿ,” ಎಂದನು.</verse>
				<verse number="34">ಲಾಬಾನನು, “ನೀನು ಹೇಳಿದಂತೆಯೇ ಆಗಲಿ,” ಎಂದನು.</verse>
				<verse number="35">ಅದೇ ದಿನದಲ್ಲಿ ಲಾಬಾನನು ಹೋತಗಳಲ್ಲಿ ರೇಖೆ, ಮಚ್ಚೆ ಇದ್ದವುಗಳನ್ನೂ ಮತ್ತು ಸ್ವಲ್ಪ ಬಿಳುಪಾದ ಬಣ್ಣವಿದ್ದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಂದು ಬಣ್ಣವಿದ್ದವುಗಳನ್ನೂ ವಿಂಗಡಿಸಿ, ತನ್ನ ಪುತ್ರರ ಕೈಗೆ ಕೊಟ್ಟನು.</verse>
				<verse number="36">ತನಗೂ, ಯಾಕೋಬನಿಗೂ ಮಧ್ಯದಲ್ಲಿ ಮೂರು ದಿನಗಳ ಪ್ರಯಾಣದಷ್ಟು ಅಂತರವನ್ನು ಬಿಟ್ಟನು. ಯಾಕೋಬನು ಲಾಬಾನನ ಮಿಕ್ಕ ಮಂದೆಯನ್ನು ಮೇಯಿಸಿದನು.</verse>
				<verse number="37">ಹೀಗಿರುವಲ್ಲಿ ಯಾಕೋಬನು ಲಿಬ್ನೆ, ಲೂಜು, ಅರ್ಮೋನ್ ಎಂಬ ಮರಗಳ ಹಸಿ ಕೋಲುಗಳನ್ನು ತೆಗೆದುಕೊಂಡು, ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು, ಅವುಗಳಲ್ಲಿರುವ ಬಿಳಿಯ ಬಣ್ಣವು ಕಾಣಿಸುವಂತೆ ಮಾಡಿದನು.</verse>
				<verse number="38">ಮಂದೆಗಳು ನೀರು ಕುಡಿಯುವುದಕ್ಕೆ ಬಂದಾಗ, ಅವು ಗರ್ಭಧರಿಸಬೇಕೆಂದು ನೀರು ಕುಡಿಯುವ ದೋಣಿಗಳಲ್ಲಿ ತಾನು ತೊಗಟೆ ಸುಲಿದ ಕೋಲುಗಳನ್ನು ಅವುಗಳ ಮುಂದೆ ಇಟ್ಟನು.</verse>
				<verse number="39">ಮಂದೆಗಳು ಆ ಕೋಲುಗಳನ್ನು ನೋಡಿ, ಸಂಗಮ ಮಾಡಿದ್ದರಿಂದ, ಚುಕ್ಕೆ ಮಚ್ಚೆ ರೇಖೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.</verse>
				<verse number="40">ಯಾಕೋಬನು ಕುರಿಗಳನ್ನು ಬೇರೆ ಮಾಡಿ, ಲಾಬಾನನ ಮಂದೆಯಲ್ಲಿರುವ ರೇಖೆಗಳುಳ್ಳ ಆಡುಕುರಿಗಳೆದುರಾಗಿಯೂ ಕಂದು ಬಣ್ಣ ಉಳ್ಳವುಗಳೆದುರಾಗಿಯೂ ಕುರಿಗಳನ್ನು ಇರಿಸಿದನು. ಅವನು ತನ್ನ ಮಂದೆಯನ್ನು ಲಾಬಾನನ ಮಂದೆಗಳೊಂದಿಗೆ ಸೇರಿಸದೆ, ಅವುಗಳನ್ನು ಬೇರೆ ಇಟ್ಟುಕೊಂಡನು.</verse>
				<verse number="41">ಬಲವಾದ ಕುರಿಗಳು ಸಂಗಮ ಮಾಡುವಾಗ ಯಾಕೋಬನು ಆ ಕುರಿಗಳು ಕೋಲುಗಳನ್ನು ನೋಡುತ್ತಾ ಗರ್ಭಧರಿಸುವ ಹಾಗೆ ಕೋಲುಗಳನ್ನು ಕುರಿಗಳ ಕಣ್ಣೆದುರಾಗಿ ದೋಣಿಗಳಲ್ಲಿ ಇಡುತ್ತಿದ್ದನು.</verse>
				<verse number="42">ಆದರೆ ಕುರಿಗಳು ಬಲಹೀನವಾಗಿದ್ದಾಗ, ಅವನು ಕೋಲುಗಳನ್ನು ದೋಣಿಗಳಲ್ಲಿ ಇಡಲಿಲ್ಲ. ಹೀಗಾಗಿ ಬಲಹೀನವಾದವುಗಳು ಲಾಬಾನನಿಗೂ, ಬಲವಾದವುಗಳು ಯಾಕೋಬನಿಗೂ ಆದವು.</verse>
				<verse number="43">ಈ ಪ್ರಕಾರ ಯಾಕೋಬನು ಅತ್ಯಧಿಕವಾಗಿ ಅಭಿವೃದ್ಧಿಯಾದ್ದರಿಂದ, ಬಹು ಕುರಿಗಳೂ ದಾಸದಾಸಿಯರೂ ಒಂಟೆಗಳೂ ಕತ್ತೆಗಳೂ ಅವನಿಗೆ ದೊರೆತವು.</verse>
			</chapter>
			<chapter number="31">
				<verse number="1">ಲಾಬಾನನ ಮಕ್ಕಳು, “ನಮ್ಮ ತಂದೆಗೆ ಇದ್ದವುಗಳನ್ನೆಲ್ಲಾ ಯಾಕೋಬನು ತೆಗೆದುಕೊಂಡು, ನಮ್ಮ ತಂದೆಗಿದ್ದವುಗಳಿಂದ ಈ ಘನತೆಯನ್ನೆಲ್ಲಾ ಪಡೆದಿದ್ದಾನೆ,” ಎಂದು ಹೇಳುವ ಮಾತುಗಳನ್ನು ಯಾಕೋಬನು ಕೇಳಿದನು.</verse>
				<verse number="2">ಇದಲ್ಲದೆ ಯಾಕೋಬನು ಲಾಬಾನನ ಮುಖವನ್ನು ನೋಡಿದಾಗ, ಅದು ತನ್ನ ಕಡೆಗೆ ಮೊದಲು ಇದ್ದ ಹಾಗೆ ಇರಲಿಲ್ಲ.</verse>
				<verse number="3">ಆಗ ಯೆಹೋವ ದೇವರು ಯಾಕೋಬನಿಗೆ, “ನಿನ್ನ ತಂದೆಗಳ ದೇಶಕ್ಕೂ, ನಿನ್ನ ಬಂಧುಗಳ ಬಳಿಗೂ ಹಿಂದಿರುಗಿ ಹೋಗು. ನಾನು ನಿನ್ನ ಸಂಗಡ ಇರುವೆನು,” ಎಂದರು.</verse>
				<verse number="4">ಯಾಕೋಬನು ರಾಹೇಲಳನ್ನೂ, ಲೇಯಳನ್ನೂ ಹೊಲದಲ್ಲಿದ್ದ ತನ್ನ ಮಂದೆಯ ಬಳಿಗೆ ಕರೆಸಿದನು.</verse>
				<verse number="5">ಅವರಿಗೆ, “ನಿಮ್ಮ ತಂದೆಯ ಮುಖವು ಮೊದಲು ನನ್ನ ಕಡೆಗೆ ಇದ್ದ ಹಾಗೆ ಈಗ ಇಲ್ಲದಿರುವುದನ್ನು ನಾನು ನೋಡಿದ್ದೇನೆ. ಆದರೆ ನನ್ನ ತಂದೆಯ ದೇವರು ನನ್ನ ಕಡೆಗೆ ಇದ್ದಾರೆ.</verse>
				<verse number="6">ನಾನು ಪೂರ್ಣಬಲದಿಂದ ನಿಮ್ಮ ತಂದೆಯ ಸೇವೆ ಮಾಡಿದ್ದು ನಿಮಗೆ ತಿಳಿದಿದೆ.</verse>
				<verse number="7">ಆದರೆ ನಿಮ್ಮ ತಂದೆಯು ನನಗೆ ವಂಚನೆಮಾಡಿ, ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದನು. ಆದಾಗ್ಯೂ ದೇವರು ಅವನಿಂದ ನನಗೆ ಕೇಡು ಮಾಡಗೊಡಿಸಲಿಲ್ಲ.</verse>
				<verse number="8">ನಿಮ್ಮ ತಂದೆ ನನಗೆ, ‘ಚುಕ್ಕೆಯುಳ್ಳದ್ದು ನಿನಗೆ ಸಂಬಳವಾಗಿರಲಿ,’ ಅಂದಾಗ, ಮಂದೆಯೆಲ್ಲಾ ಚುಕ್ಕೆಯುಳ್ಳದ್ದನ್ನೇ ಈಯಿತು. ಅವನು, ‘ರೇಖೆಯುಳ್ಳದ್ದು ನಿನಗೆ ಸಂಬಳವಾಗಿರಲಿ,’ ಎಂದಾಗ, ಮಂದೆಯೆಲ್ಲಾ ರೇಖೆಯುಳ್ಳದ್ದನ್ನೇ ಈಯಿತು.</verse>
				<verse number="9">ಹೀಗೆ ದೇವರು ನಿಮ್ಮ ತಂದೆಯ ಪಶುಗಳನ್ನು ತೆಗೆದು, ನನಗೆ ಕೊಟ್ಟಿದ್ದಾರೆ.</verse>
				<verse number="10">“ಇದಲ್ಲದೆ ಕುರಿಗಳು ಸಂಗಮ ಮಾಡುವಾಗ, ಸ್ವಪ್ನದಲ್ಲಿ ನಾನು ನನ್ನ ಕಣ್ಣುಗಳನ್ನೆತ್ತಿ ನೋಡಲಾಗಿ, ಕುರಿಗಳ ಮೇಲೆ ಏರುವ ಟಗರುಗಳು ಚುಕ್ಕೆ, ಮಚ್ಚೆ, ರೇಖೆಗಳುಳ್ಳವುಗಳಾಗಿದ್ದವು.</verse>
				<verse number="11">ದೇವದೂತನು ಸ್ವಪ್ನದಲ್ಲಿ ನನಗೆ, ‘ಯಾಕೋಬನೇ’ ಎಂದನು. ಅದಕ್ಕೆ ನಾನು, ‘ಇಲ್ಲಿ ಇದ್ದೇನೆ,’ ಎಂದೆನು.</verse>
				<verse number="12">ಅವನು ನನಗೆ, ‘ನಿನ್ನ ಕಣ್ಣುಗಳನ್ನೆತ್ತಿ ಕುರಿಗಳನ್ನೇರುವ ಎಲ್ಲಾ ಟಗರುಗಳನ್ನು ನೋಡು. ಅವು ಚುಕ್ಕೆ, ಮಚ್ಚೆ, ರೇಖೆಯೂ ಉಳ್ಳವುಗಳಾಗಿವೆ. ಏಕೆಂದರೆ ಲಾಬಾನನು ನಿನಗೆ ಮಾಡಿದ್ದನ್ನೆಲ್ಲಾ ಕಂಡಿದ್ದೇನೆ.</verse>
				<verse number="13">ನೀನು ಸ್ತಂಭವನ್ನು ಅಭಿಷೇಕಿಸಿ, ನನಗೆ ಪ್ರಮಾಣ ಮಾಡಿದ ಬೇತೇಲಿನ ದೇವರು ನಾನೇ. ಈಗ ಎದ್ದು ಈ ದೇಶದಿಂದ ಹೊರಟು, ನಿನ್ನ ಬಂಧುಗಳ ದೇಶಕ್ಕೆ ಹಿಂದಿರುಗಿ ಹೋಗು,’ ಎಂದು ಹೇಳಿದ್ದಾರೆ,” ಎಂದನು.</verse>
				<verse number="14">ಆಗ ರಾಹೇಲಳು, ಲೇಯಳು ಅವನಿಗೆ, “ನಮ್ಮ ತಂದೆಯ ಮನೆಯಲ್ಲಿ ಇನ್ನೇನಾದರೂ ಭಾಗವೂ, ಬಾಧ್ಯತೆಯೂ ಇದೆಯೋ?</verse>
				<verse number="15">ಅವನು ನಮ್ಮನ್ನು ಹೊರಗಿನವರಂತೆ ಎಣಿಸಿದ್ದಾನಲ್ಲಾ. ಅವನು ನಮ್ಮನ್ನು ಮಾರಿ, ನಮ್ಮ ಹಣವನ್ನೂ ನುಂಗೇ ಬಿಟ್ಟನಲ್ಲಾ.</verse>
				<verse number="16">ಆದ್ದರಿಂದ ದೇವರು ನಮ್ಮ ತಂದೆಯಿಂದ ತೆಗೆದುಕೊಂಡ ಐಶ್ವರ್ಯವೆಲ್ಲಾ ನಮ್ಮದು, ನಮ್ಮ ಮಕ್ಕಳದು. ಹಾಗಾದರೆ ಈಗ ದೇವರು ನಿನಗೆ ಹೇಳಿದ್ದನ್ನೆಲ್ಲಾ ಮಾಡು,” ಎಂದರು.</verse>
				<verse number="17">ಆಗ ಯಾಕೋಬನು ಎದ್ದು ತನ್ನ ಮಕ್ಕಳನ್ನೂ, ತನ್ನ ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿ,</verse>
				<verse number="18">ತನ್ನ ಎಲ್ಲಾ ಪಶುಗಳನ್ನೂ, ತಾನು ಸಂಪಾದಿಸಿದ ಎಲ್ಲಾ ಸಂಪತ್ತನ್ನೂ, ಪದ್ದನ್ ಅರಾಮಿನಲ್ಲಿ ತಾನು ಸಂಪಾದಿಸಿದ ಪಶುಗಳನ್ನೂ ಕಾನಾನ್ ದೇಶದಲ್ಲಿದ್ದ ತನ್ನ ತಂದೆ ಇಸಾಕನ ಬಳಿಗೆ ತೆಗೆದುಕೊಂಡು ಹೊರಟನು.</verse>
				<verse number="19">ಲಾಬಾನನು ತನ್ನ ಕುರಿಗಳ ಉಣ್ಣೆ ಕತ್ತರಿಸುವುದಕ್ಕೆ ಹೋಗಿದ್ದನು. ಆಗ ರಾಹೇಲಳು ತನ್ನ ತಂದೆಯ ವಿಗ್ರಹಗಳನ್ನು ಕದ್ದುಕೊಂಡಳು.</verse>
				<verse number="20">ಆದರೆ ಯಾಕೋಬನು ತಾನು ಹೋಗುವುದನ್ನು ಅರಾಮ್ಯನಾದ ಲಾಬಾನನಿಗೆ ತಿಳಿಸದೆ ವಂಚಿಸಿ ಓಡಿಹೋದನು.</verse>
				<verse number="21">ಅವನು ತನಗಿದ್ದದ್ದನ್ನೆಲ್ಲಾ ತೆಗೆದುಕೊಂಡು ಓಡಿಹೋದನು. ಅವನು ಎದ್ದು ಗಿಲ್ಯಾದ್ ಪರ್ವತಕ್ಕೆ ಅಭಿಮುಖವಾಗಿ ಯೂಫ್ರೇಟೀಸ್ ನದಿಯನ್ನು ದಾಟಿದನು.</verse>
				<verse number="22">ಯಾಕೋಬನು ಓಡಿಹೋದನೆಂದು ಮೂರನೆಯ ದಿವಸದಲ್ಲಿ ಲಾಬಾನನಿಗೆ ತಿಳಿಯಿತು.</verse>
				<verse number="23">ಆಗ ಅವನು ತನ್ನ ಬಂಧುಗಳನ್ನು ಕರೆದುಕೊಂಡು, ಅವನನ್ನು ಬೆನ್ನಟ್ಟಿ, ಏಳು ದಿನ ಪ್ರಯಾಣಮಾಡಿ, ಗಿಲ್ಯಾದ್ ಪರ್ವತದಲ್ಲಿ ಅವನನ್ನು ಸಂಧಿಸಿದನು.</verse>
				<verse number="24">ಆ ರಾತ್ರಿ ದೇವರು ಸ್ವಪ್ನದಲ್ಲಿ ಅರಾಮಿನವನಾದ ಲಾಬಾನನ ಬಳಿಗೆ ಬಂದು ಅವನಿಗೆ, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು,” ಎಂದರು.</verse>
				<verse number="25">ತರುವಾಯ ಲಾಬಾನನು ಯಾಕೋಬನನ್ನು ಸಂಧಿಸಿದಾಗ, ಯಾಕೋಬನು ಗಿಲ್ಯಾದ್ ಪರ್ವತದಲ್ಲಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು. ಲಾಬಾನನು ಸಹ ಅಲ್ಲಿಯೇ ಗುಡಾರವನ್ನು ಹಾಕಿಸಿದ್ದನು.</verse>
				<verse number="26">ಲಾಬಾನನು ಯಾಕೋಬನಿಗೆ, “ನೀನು ಏನು ಮಾಡಿದೆ? ನನಗೆ ತಿಳಿಸದೆ ಮೋಸಮಾಡಿದ್ದೀಯೆ ಮತ್ತು ನನ್ನ ಪುತ್ರಿಯರನ್ನು ಯುದ್ಧದಲ್ಲಿ ಸೆರೆಹಿಡಿದವರ ಹಾಗೆ ತೆಗೆದುಕೊಂಡು ಹೋದೆಯಲ್ಲಾ.</verse>
				<verse number="27">ಯಾಕೆ ನೀನು ಗುಪ್ತವಾಗಿ ಕಳ್ಳತನದಿಂದ ಓಡಿ ಹೋದೆ? ಏಕೆ ಮೋಸಮಾಡಿದೆ? ನನಗೆ ತಿಳಿಸಿದ್ದರೆ ಸಂತೋಷದಿಂದ ಹಾಡು, ತಾಳ, ವೀಣೆಗಳ ಸಂಗೀತದೊಂದಿಗೆ ನಿನ್ನನ್ನು ಕಳುಹಿಸುತ್ತಿದ್ದೆನು.</verse>
				<verse number="28">ಆದರೆ ನೀನು ನನ್ನ ಮೊಮ್ಮಕ್ಕಳಿಗೂ, ನನ್ನ ಹೆಣ್ಣು ಮಕ್ಕಳಿಗೂ ಮುದ್ದು ಕೊಡುವುದಕ್ಕೂ ಬಿಡಲಿಲ್ಲ. ನೀನು ಮಾಡಿದ್ದು ಬುದ್ಧಿಹೀನ ಕೆಲಸವೇ ಸರಿ.</verse>
				<verse number="29">ನಿನಗೆ ಕೇಡು ಮಾಡುವುದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ, ‘ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಹೇಳದಂತೆ ಎಚ್ಚರವಾಗಿರು,’ ಎಂದು ಹೇಳಿದರು.</verse>
				<verse number="30">ಈಗ ನೀನು ನಿನ್ನ ತಂದೆಯ ಮನೆಯನ್ನು ಬಹಳವಾಗಿ ಹಾರೈಸಿದ್ದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದನು.</verse>
				<verse number="31">ಅದಕ್ಕೆ ಯಾಕೋಬನು ಉತ್ತರವಾಗಿ ಲಾಬಾನನಿಗೆ, “ನೀನು ನಿನ್ನ ಪುತ್ರಿಯರನ್ನು ನನ್ನಿಂದ ಬಲಾತ್ಕಾರದಿಂದ ಹಿಂದಕ್ಕೆ ತೆಗೆದುಕೊಳ್ಳುವೆ ಎಂದು ಭಯಪಟ್ಟೆನು.</verse>
				<verse number="32">ಆದರೆ ಯಾರ ಬಳಿಯಲ್ಲಿ ನಿನ್ನ ದೇವರುಗಳು ಸಿಕ್ಕುವುವೋ ಅವರು ಸಾಯಲಿ. ನನ್ನ ಬಳಿಯಲ್ಲಿ ನಿನ್ನದೇನಾದರೂ ಇದ್ದರೆ, ನಮ್ಮ ಬಂಧುಗಳ ಮುಂದೆ ವಿಚಾರಿಸಿ ಅದನ್ನು ತೆಗೆದುಕೋ,” ಎಂದನು. ಆದರೆ ರಾಹೇಲಳು ಅವುಗಳನ್ನು ಕದ್ದುಕೊಂಡದ್ದು ಯಾಕೋಬನಿಗೆ ತಿಳಿದಿರಲಿಲ್ಲ.</verse>
				<verse number="33">ಆಗ ಲಾಬಾನನು ಯಾಕೋಬನ ಗುಡಾರದಲ್ಲಿಯೂ, ಲೇಯಳ ಗುಡಾರದಲ್ಲಿಯೂ, ಆ ಇಬ್ಬರು ದಾಸಿಯರ ಗುಡಾರಗಳಲ್ಲಿಯೂ ಹೋಗಿ ಹುಡುಕಿದರೂ, ಅವುಗಳನ್ನು ಕಾಣಲಿಲ್ಲ. ಲೇಯಳ ಗುಡಾರದಿಂದ ಹೊರಟು ರಾಹೇಲಳ ಗುಡಾರದೊಳಗೆ ಹೋದನು.</verse>
				<verse number="34">ಆದರೆ ರಾಹೇಲಳು ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಾಮಗ್ರಿಯಲ್ಲಿಟ್ಟು, ಅದರ ಮೇಲೆ ಕುಳಿತುಕೊಂಡಳು. ಲಾಬಾನನು ಗುಡಾರವನ್ನೆಲ್ಲಾ ಹುಡುಕಿದರೂ, ಅವನು ಅವುಗಳನ್ನು ಕಾಣಲಿಲ್ಲ.</verse>
				<verse number="35">ರಾಹೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೇ ಇರುವುದರಿಂದ, ನನ್ನ ಮೇಲೆ ಕೋಪಬಾರದೆ ಇರಲಿ. ಏಕೆಂದರೆ ನಾನು ಮುಟ್ಟಾಗಿದ್ದೇನೆ,” ಎಂದಳು. ಅವನು ಹುಡುಕಿ ಆ ವಿಗ್ರಹಗಳನ್ನು ಕಂಡುಕೊಳ್ಳದೆ ಹೋದನು.</verse>
				<verse number="36">ಆಗ ಯಾಕೋಬನು ಕೋಪಗೊಂಡು ಲಾಬಾನನೊಂದಿಗೆ ವಾದಿಸಿದನು. ಯಾಕೋಬನು ಉತ್ತರವಾಗಿ ಲಾಬಾನನಿಗೆ, “ನೀನು ನನ್ನನ್ನು ಬೆನ್ನಟ್ಟಿ ಬರುವುದಕ್ಕೆ ನನ್ನ ಅಪರಾಧವೇನು?” ನನ್ನ ಪಾಪವೇನು?</verse>
				<verse number="37">ನೀನು ನನ್ನ ಸಲಕರಣೆಗಳನ್ನೆಲ್ಲಾ ಹುಡುಕಿದ ಮೇಲೆ ನಿನ್ನ ಮನೆಯ ಯಾವ ವಸ್ತುಗಳನ್ನು ಕಂಡುಕೊಂಡೆ? ನನಗೂ, ನಿನಗೂ ಬಂಧುಗಳಾಗಿರುವವರ ಮುಂದೆ ಅದನ್ನು ಇಲ್ಲಿ ಇಡು. ಅವರೇ ನಮ್ಮಿಬ್ಬರ ಮಧ್ಯೆ ನ್ಯಾಯತೀರಿಸಲಿ.</verse>
				<verse number="38">“ಈ ಇಪ್ಪತ್ತು ವರ್ಷ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಕುರಿಗಳೂ, ಮೇಕೆಗಳೂ ಮರಿ ಹಾಕಲಿಲ್ಲ. ನಿನ್ನ ಕುರಿ ಹೋತಗಳನ್ನು ನಾನು ತಿನ್ನಲಿಲ್ಲ.</verse>
				<verse number="39">ಮೃಗಗಳಿಂದ ಘಾಯವಾದವುಗಳನ್ನು ನಿನ್ನ ಬಳಿಗೆ ತಾರದೆ, ಅವುಗಳ ನಷ್ಟವನ್ನು ನಾನೇ ಹೊತ್ತೆನು. ಹಗಲಲ್ಲಿ ಕದ್ದದ್ದನ್ನೂ, ರಾತ್ರಿಯಲ್ಲಿ ಕದ್ದದ್ದನ್ನೂ ನನ್ನಿಂದಲೇ ತೆಗೆದುಕೊಂಡೆ.</verse>
				<verse number="40">ನನ್ನ ಸ್ಥಿತಿ ಹೀಗೆ ಇತ್ತು: ಹಗಲಲ್ಲಿ ಬಿಸಿಲಿನಿಂದಲೂ ಇರುಳಲ್ಲಿ ಚಳಿಯಿಂದಲೂ ಬಾಧೆಪಟ್ಟೆನು. ನನ್ನ ಕಣ್ಣುಗಳಿಗೆ ನಿದ್ರೆ ತಪ್ಪಿಹೋಯಿತು.</verse>
				<verse number="41">ನಿನ್ನ ಇಬ್ಬರು ಪುತ್ರಿಯರಿಗಾಗಿ ಹದಿನಾಲ್ಕು ವರ್ಷ, ನಿನ್ನ ಮಂದೆಗಳಿಗೋಸ್ಕರ ಆರು ವರ್ಷ, ಈ ಪ್ರಕಾರ ಇಪ್ಪತ್ತು ವರ್ಷ ನಿನ್ನ ಮನೆಯಲ್ಲಿದ್ದು, ನಿನ್ನ ಸೇವೆ ಮಾಡಿದೆನು. ಆದರೆ ನೀನು ನನ್ನ ಸಂಬಳವನ್ನು ಹತ್ತು ಸಾರಿ ಬದಲಾಯಿಸಿದೆ.</verse>
				<verse number="42">ನನ್ನ ತಂದೆ ದೇವರೂ, ಅಬ್ರಹಾಮನ ದೇವರೂ, ಇಸಾಕನ ಭಯವೂ ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸುತ್ತಿದ್ದೆ. ನನ್ನ ಬಾಧೆಯನ್ನೂ, ನನ್ನ ಕಷ್ಟವನ್ನೂ ದೇವರು ಕಂಡು, ನಿನ್ನೆ ರಾತ್ರಿ ನಿನ್ನನ್ನು ಗದರಿಸಿದ್ದಾರೆ,” ಎಂದನು.</verse>
				<verse number="43">ಲಾಬಾನನು ಅದಕ್ಕೆ ಉತ್ತರವಾಗಿ ಯಾಕೋಬನಿಗೆ, “ಈ ಪುತ್ರಿಯರು ನನ್ನ ಪುತ್ರಿಯರೇ, ಈ ಮಕ್ಕಳು ನನ್ನ ಮಕ್ಕಳೇ, ಈ ಮಂದೆಯು ನನ್ನ ಮಂದೆಯೇ, ಅಂತು ನೀನು ಕಾಣುವುದೆಲ್ಲಾ ನನ್ನದೇ. ಹಾಗಾದರೆ ನನ್ನ ಪುತ್ರಿಯರಿಗಾಗಲಿ, ಅವರು ಹೆತ್ತ ಮಕ್ಕಳಿಗಾಗಲಿ ನಾನು ಈ ಹೊತ್ತು ಏನು ಮಾಡಲಿ?</verse>
				<verse number="44">ಆದ್ದರಿಂದ ನೀನು ಇಲ್ಲಿ ಬಾ, ನಾನೂ ನೀನೂ ಒಡಂಬಡಿಕೆಯನ್ನು ಮಾಡೋಣ, ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ,” ಎಂದನು.</verse>
				<verse number="45">ಆಗ ಯಾಕೋಬನು ಒಂದು ಕಲ್ಲನ್ನು ತೆಗೆದುಕೊಂಡು ಸ್ತಂಭವಾಗಿ ನಿಲ್ಲಿಸಿದನು.</verse>
				<verse number="46">ಯಾಕೋಬನು ತನ್ನ ಕಡೆಯವರಿಗೆ, “ಕಲ್ಲುಗಳನ್ನು ಕೂಡಿಸಿರಿ,” ಎಂದನು. ಅವರು ಕಲ್ಲುಗಳನ್ನು ತೆಗೆದುಕೊಂಡು ಒಂದು ಕುಪ್ಪೆ ಮಾಡಿದರು. ಅವರು ಆ ಕುಪ್ಪೆಯ ಬಳಿಯಲ್ಲಿ ಕುಳಿತುಕೊಂಡು ಊಟಮಾಡಿದರು.</verse>
				<verse number="47">ಆ ಕುಪ್ಪೆಗೆ ಲಾಬಾನನು ಯಗರಸಾಹದೂತ ಎಂದು ಹೆಸರಿಟ್ಟನು. ಯಾಕೋಬನು ಗಲೇದ್ ಎಂದು ಹೆಸರಿಟ್ಟನು.</verse>
				<verse number="48">ಆಗ ಲಾಬಾನನು, “ಈ ಕುಪ್ಪೆಯು ಈ ಹೊತ್ತು ನಿನಗೂ ನನಗೂ ಸಾಕ್ಷಿಯಾಗಿದೆ,” ಎಂದನು. ಆದ್ದರಿಂದ ಅದಕ್ಕೆ ಗಲೇದ್ ಎಂದೂ,</verse>
				<verse number="49">ಮಿಚ್ಪಾ ಎಂದೂ ಹೆಸರಾಯಿತು. ಏಕೆಂದರೆ, “ನನಗೂ ನಿನಗೂ ಮಧ್ಯದಲ್ಲಿ ನಾವು ಒಬ್ಬರಿಗೊಬ್ಬರು ಅಗಲಿರುವಾಗ ಯೆಹೋವ ದೇವರು ನಮ್ಮನ್ನು ನೋಡಿಕೊಳ್ಳುತ್ತಾ ಇರಲಿ.</verse>
				<verse number="50">ನೀನು ನನ್ನ ಪುತ್ರಿಯರನ್ನು ಉಪದ್ರವಪಡಿಸಿದರೆ, ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ಪಡೆದರೆ, ಯಾವ ಮನುಷ್ಯನೂ ವಿಚಾರಿಸಲು ಇಲ್ಲದಿದ್ದರೂ ನನಗೂ ನಿನಗೂ ನಡುವೆ ದೇವರೇ ಈ ಒಪ್ಪಂದಕ್ಕೆ ಸಾಕ್ಷಿ,” ಎಂದನು.</verse>
				<verse number="51">ಲಾಬಾನನು ಯಾಕೋಬನಿಗೆ, “ನಿನಗೂ ನನಗೂ ಮಧ್ಯೆ ನಾನು ಹಾಕಿಸಿರುವ ಈ ಕುಪ್ಪೆಯನ್ನು ನೋಡು, ಈ ಸ್ತಂಭವನ್ನು ನೋಡು,</verse>
				<verse number="52">ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಹತ್ತಿರ ಬರುವುದಿಲ್ಲ; ನೀನು ಈ ಕುಪ್ಪೆಯನ್ನು ಮತ್ತು ಸ್ತಂಭವನ್ನು ಕೇಡಿಗಾಗಿ ದಾಟುವುದಿಲ್ಲವೆಂಬುದಕ್ಕೆ ಈ ಕುಪ್ಪೆಯೂ ಈ ಸ್ತಂಭವೂ ಸಾಕ್ಷಿಯಾಗಿವೆ.</verse>
				<verse number="53">ಅಬ್ರಹಾಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯತೀರಿಸಲಿ,” ಎಂದನು. ಆಗ ಯಾಕೋಬನು ತನ್ನ ತಂದೆ ಇಸಾಕನ ಭಯದ ಮೇಲೆ ಪ್ರಮಾಣ ಮಾಡಿದನು.</verse>
				<verse number="54">ಯಾಕೋಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ, ಭೋಜನ ಮಾಡುವುದಕ್ಕೆ ತನ್ನ ಬಂಧುಗಳನ್ನು ಕರೆಕಳುಹಿಸಿದನು. ಅವರು ಭೋಜನ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು.</verse>
				<verse number="55">ಮುಂಜಾನೆ ಲಾಬಾನನು ಎದ್ದು ತನ್ನ ಪುತ್ರ ಪುತ್ರಿಯರಿಗೆ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.</verse>
			</chapter>
			<chapter number="32">
				<verse number="1">ಅನಂತರ ಯಾಕೋಬನು ತನ್ನ ಮಾರ್ಗವಾಗಿ ಹೋಗುತ್ತಿದ್ದಾಗ, ದೇವದೂತರು ಅವನ ಎದುರಿಗೆ ಬಂದರು.</verse>
				<verse number="2">ಯಾಕೋಬನು ಅವರನ್ನು ನೋಡಿದಾಗ, “ಇದು ದೇವರ ಸೈನ್ಯ,” ಎಂದು ಹೇಳಿ, ಆ ಸ್ಥಳಕ್ಕೆ ಮಹನಯಿಮ್ ಎಂದು ಹೆಸರಿಟ್ಟನು.</verse>
				<verse number="3">ಯಾಕೋಬನು ಎದೋಮ್ಯರ ದೇಶವಾದ ಸೇಯೀರನ ಸೀಮೆಯಲ್ಲಿರುವ ತನ್ನ ಅಣ್ಣನಾದ ಏಸಾವನ ಬಳಿಗೆ ದೂತರನ್ನು ತನ್ನ ಮುಂದಾಗಿ ಕಳುಹಿಸಿದನು.</verse>
				<verse number="4">ಕಳುಹಿಸುವಾಗ ಅವರಿಗೆ, “ನನ್ನ ಯಜಮಾನನಾದ ಏಸಾವನಿಗೆ ನೀವು ಹೀಗೆ ಹೇಳಬೇಕು: ‘ನಿನ್ನ ದಾಸನಾದ ಯಾಕೋಬನು ಹೀಗೆ ಹೇಳುತ್ತಾನೆ: ಲಾಬಾನನ ಸಂಗಡ ನಾನು ಇಲ್ಲಿಯವರೆಗೆ ಪ್ರವಾಸಿಯಾಗಿದ್ದೆನು.</verse>
				<verse number="5">ಈಗ ನನಗೆ ಎತ್ತು, ಕತ್ತೆ, ಕುರಿಗಳು, ದಾಸದಾಸಿಯರು ಇದ್ದಾರೆ. ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದುವಂತೆ ನಾನು ಈ ಸಂದೇಶವನ್ನು ನನ್ನ ಯಜಮಾನನಾದ ನಿಮಗೆ ತಿಳಿಸುವುದಕ್ಕಾಗಿ ಕಳುಹಿಸಿದ್ದೇನೆ,’ ಎಂದು ಹೇಳಿರಿ,” ಎಂದನು.</verse>
				<verse number="6">ಆಗ ದೂತರು ಯಾಕೋಬನ ಬಳಿಗೆ ಹಿಂದಿರುಗಿ ಬಂದು, “ನಾವು ನಿನ್ನ ಸಹೋದರ ಏಸಾವನ ಬಳಿಗೆ ಹೋಗಿ ಬಂದಿದ್ದೇವೆ; ಅವನು ನಾನೂರು ಮಂದಿಯನ್ನು ಕರೆದುಕೊಂಡು ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಿದ್ದಾನೆ,” ಎಂದರು.</verse>
				<verse number="7">ಆಗ ಯಾಕೋಬನು ಬಹಳವಾಗಿ ಭಯಪಟ್ಟು, ತನ್ನ ಸಂಗಡ ಇದ್ದ ಜನರನ್ನೂ, ಕುರಿಗಳನ್ನೂ, ದನಗಳನ್ನೂ, ಒಂಟೆಗಳನ್ನೂ ಎರಡು ಗುಂಪುಗಳಾಗಿ ವಿಭಾಗಿಸಿದನು.</verse>
				<verse number="8">ಏಕೆಂದರೆ, “ಏಸಾವನು ಒಂದು ಗುಂಪಿನ ಮೇಲೆ ದಾಳಿಮಾಡಿದರೆ, ಉಳಿದ ಗುಂಪು ತಪ್ಪಿಸಿಕೊಂಡು ಹೋಗಬಹುದು,” ಎಂದುಕೊಂಡನು.</verse>
				<verse number="9">ಇದಲ್ಲದೆ ಯಾಕೋಬನು, “ನನ್ನ ತಂದೆ ಅಬ್ರಹಾಮನ ದೇವರೇ, ನನ್ನ ತಂದೆ ಇಸಾಕನ ದೇವರೇ, ನಿಮ್ಮ ದೇಶಕ್ಕೂ, ನಿನ್ನ ಬಂಧುಗಳ ಬಳಿಗೂ ಹಿಂದಿರುಗಿ ಹೋಗು. ಆಗ ನಾನು ನಿನಗೆ ಒಳ್ಳೆಯದನ್ನು ಮಾಡುವೆನು ಎಂದು ನನಗೆ ಹೇಳಿದ ಯೆಹೋವ ದೇವರೇ,</verse>
				<verse number="10">ನೀವು ನಿಮ್ಮ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ, ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಏಕೆಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ, ನನ್ನ ಕೈಯಲ್ಲಿ ಕೋಲು ಮಾತ್ರವೇ ಇತ್ತು, ಈಗ ನನಗೆ ಎರಡು ಗುಂಪುಗಳಿವೆ.</verse>
				<verse number="11">ನನ್ನ ಅಣ್ಣ ಏಸಾವನ ಕೈಯಿಂದ ನನ್ನನ್ನು ತಪ್ಪಿಸಿರಿ. ಏಕೆಂದರೆ ಅವನು ಬಂದು ನನ್ನನ್ನೂ, ಮಕ್ಕಳೊಂದಿಗೆ ತಾಯಂದಿರನ್ನೂ, ದಾಳಿಮಾಡುವನು ಎಂದು ನಾನು ಅವನಿಗೆ ಭಯಪಡುತ್ತೇನೆ.</verse>
				<verse number="12">‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡುವೆನು ಮತ್ತು ನಿನ್ನ ಸಂತತಿಯನ್ನು ಎಣಿಸುವುದಕ್ಕಾಗದ ಸಮುದ್ರದ ಮರಳಿನ ಹಾಗೆ ಮಾಡುವೆನು,’ ಎಂದು ನನಗೆ ಹೇಳಿದ್ದೀರಲ್ಲಾ?” ಎಂದನು.</verse>
				<verse number="13">ಯಾಕೋಬನು ಆ ರಾತ್ರಿ ಅಲ್ಲೇ ಕಳೆದನು. ತಾನು ತಂದದ್ದರಲ್ಲಿ ಕೆಲವನ್ನು ಅವನ ಅಣ್ಣ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.</verse>
				<verse number="14">ಅವು ಯಾವುವೆಂದರೆ, ಇನ್ನೂರು ಮೇಕೆಗಳು, ಇಪ್ಪತ್ತು ಹೋತಗಳು, ಇನ್ನೂರು ಕುರಿಗಳು, ಇಪ್ಪತ್ತು ಟಗರುಗಳು,</verse>
				<verse number="15">ಹಾಲು ಕೊಡುವ ಮೂವತ್ತು ಒಂಟೆಗಳು, ಅವುಗಳ ಮರಿಗಳು, ನಲವತ್ತು ಆಕಳುಗಳು, ಹತ್ತು ಹೋರಿಗಳು, ಇಪ್ಪತ್ತು ಹೆಣ್ಣು ಕತ್ತೆಗಳು, ಹತ್ತು ಗಂಡುಕತ್ತೆಗಳು,</verse>
				<verse number="16">ಇವುಗಳಲ್ಲಿ ಪ್ರತಿಯೊಂದು ಮಂದೆಯನ್ನೂ, ಪ್ರತ್ಯೇಕವಾಗಿ ಅವನು ತನ್ನ ಸೇವಕರಿಗೆ ಒಪ್ಪಿಸಿ, ಅವರಿಗೆ, “ನನ್ನ ಮುಂದೆ ನಡೆದು ಮಂದೆ ಮಂದೆಗೂ ಮಧ್ಯದಲ್ಲಿ ಸ್ಥಳ ಬಿಡಿರಿ,” ಎಂದನು.</verse>
				<verse number="17">ಅವನು ಮೊದಲನೆಯವನಿಗೆ, “ನನ್ನ ಅಣ್ಣ ಏಸಾವನು ನಿನ್ನೆದುರಿಗೆ ಬಂದು, ‘ನೀನು ಯಾರ ಕಡೆಯವನು? ಎಲ್ಲಿಗೆ ಹೋಗುತ್ತೀ? ಇಲ್ಲಿ ನಿನ್ನ ಮುಂದೆ ಇರುವ ಇವೆಲ್ಲ ಯಾರವು?’ ಎಂದು ಕೇಳಿದರೆ,</verse>
				<verse number="18">ನೀನು ಅವನಿಗೆ, ‘ಇವು ನಿನ್ನ ದಾಸನಾದ ಯಾಕೋಬನವುಗಳೇ, ಇದು ನನ್ನ ಯಜಮಾನನಾದ ಏಸಾವನಿಗೆ ಕಳುಹಿಸಲಾದ ಕಾಣಿಕೆ, ಅವನೂ ನಮ್ಮ ಹಿಂದೆ ಇದ್ದಾನೆ,’ ಎಂದು ಅವನಿಗೆ ಹೇಳಬೇಕು,” ಎಂದು ಆಜ್ಞಾಪಿಸಿದನು.</verse>
				<verse number="19">ಎರಡನೆಯವನಿಗೂ ಮೂರನೆಯವನಿಗೂ ಮಂದೆಗಳ ಹಿಂದೆ ಹೋಗುವವರೆಲ್ಲರಿಗೂ, “ನೀವು ಏಸಾವನನ್ನು ಕಂಡರೆ ಅವನಿಗೆ ಹಾಗೆಯೇ ಹೇಳಬೇಕು.</verse>
				<verse number="20">ಇದಲ್ಲದೆ, ‘ನಿನ್ನ ದಾಸ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು,’ ” ಎಂದು ಆಜ್ಞಾಪಿಸಿದನು. ಏಕೆಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ಕಾಣುವೆನು. ಅವನು ನನ್ನನ್ನು ಅಂಗೀಕರಿಸುವನೇನೋ ಎಂದುಕೊಂಡನು.</verse>
				<verse number="21">ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟುಹೋಯಿತು. ತಾನಾದರೋ ಆ ರಾತ್ರಿ ಅಲ್ಲಿಯೇ ತಂಗಿದನು.</verse>
				<verse number="22">ಆ ರಾತ್ರಿಯಲ್ಲಿ ಯಾಕೋಬನು ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ, ತನ್ನ ಇಬ್ಬರು ದಾಸಿಯರನ್ನೂ, ತನ್ನ ಹನ್ನೊಂದು ಮಂದಿ ಪುತ್ರರನ್ನೂ ಕರೆದುಕೊಂಡು ಯಬ್ಬೋಕ್ ಎಂಬ ಹೊಳೆಯ ದಂಡೆಯನ್ನು ದಾಟಿದನು.</verse>
				<verse number="23">ಅವನು ಅವರನ್ನು ಕರೆದುಕೊಂಡು ಹೊಳೆ ದಂಡೆಯನ್ನು ದಾಟಿಸಿದ್ದಲ್ಲದೆ ತನಗಿದ್ದದ್ದನ್ನೆಲ್ಲಾ ದಾಟಿಸಿದನು.</verse>
				<verse number="24">ಆಗ ಯಾಕೋಬನು ಒಬ್ಬನೇ ಉಳಿದಾಗ, ಒಬ್ಬ ಮನುಷ್ಯನು ಉದಯವಾಗುವವರೆಗೆ ಅವನ ಸಂಗಡ ಹೋರಾಡಿದನು.</verse>
				<verse number="25">ಆ ಮನುಷ್ಯನು ಅವನನ್ನು ಜಯಿಸದೆ ಇರುವುದನ್ನು ಕಂಡು, ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಸಂಗಡ ಹೋರಾಡುತ್ತಿರುವಾಗಲೇ ಯಾಕೋಬನ ತೊಡೆಯ ಕೀಲು ತಪ್ಪಿತು.</verse>
				<verse number="26">ಅವನು ಯಾಕೋಬನಿಗೆ, “ಉದಯವಾಯಿತು, ನನ್ನನ್ನು ಹೋಗಗೊಡು,” ಎಂದಾಗ. ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು, ನಾನು ನಿನ್ನನ್ನು ಹೋಗಗೊಡಿಸೆನು,” ಎಂದನು.</verse>
				<verse number="27">ಆ ಮನುಷ್ಯನು ಅವನಿಗೆ, “ನಿನ್ನ ಹೆಸರು ಏನು?” ಎಂದಾಗ. ಅವನು, “ಯಾಕೋಬ,” ಎಂದನು.</verse>
				<verse number="28">ಅದಕ್ಕೆ ಅವನು, “ನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಎನಿಸಿಕೊಳ್ಳದೆ, ಇಸ್ರಾಯೇಲ್ ಎಂದು ನಿನಗೆ ಹೆಸರಾಗುವುದು. ಏಕೆಂದರೆ ನೀನು ದೇವರ ಸಂಗಡವೂ, ಮನುಷ್ಯರ ಸಂಗಡವೂ ಹೋರಾಡಿ ಜಯಿಸಿದ್ದೀ,” ಎಂದನು.</verse>
				<verse number="29">ಯಾಕೋಬನು, “ನಿನ್ನ ಹೆಸರನ್ನು ನನಗೆ ತಿಳಿಸು,” ಎಂದು ಅವನನ್ನು ಕೇಳಿಕೊಂಡನು. ಆತನು, “ನನ್ನ ಹೆಸರನ್ನು ಏಕೆ ಕೇಳುತ್ತೀ?” ಎಂದು ಹೇಳಿ ಅವನನ್ನು ಅಲ್ಲೇ ಆಶೀರ್ವದಿಸಿದನು.</verse>
				<verse number="30">ಆಗ ಯಾಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ, ನನ್ನ ಪ್ರಾಣ ಉಳಿಯಿತು,” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.</verse>
				<verse number="31">ಯಾಕೋಬನು ಪೆನೀಯೇಲನ್ನು ದಾಟಿಹೋದಾಗ, ಸೂರ್ಯೋದಯವಾಯಿತು. ಆದರೆ ಅವನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.</verse>
				<verse number="32">ಆತನು ಯಾಕೋಬನ ತೊಡೆಯ ಕೀಲನ್ನು ಮುದುರಿದ ನರದಲ್ಲಿ ಮುಟ್ಟಿದ್ದರಿಂದ ಇಸ್ರಾಯೇಲರು ತೊಡೆಯ ಕೀಲಿನ ಮೇಲಿರುವ ಮುದುರಿದ ನರವನ್ನು ಈ ದಿನದವರೆಗೂ ತಿನ್ನುವುದಿಲ್ಲ.</verse>
			</chapter>
			<chapter number="33">
				<verse number="1">ಯಾಕೋಬನು ಕಣ್ಣೆತ್ತಿ ನೋಡಿದಾಗ, ಏಸಾವನು ನಾನೂರು ಮಂದಿ ಮನುಷ್ಯರ ಸಂಗಡ ಬರುತ್ತಿದ್ದನು. ಆಗ ಅವನು ಲೇಯಳಿಗೂ, ರಾಹೇಲಳಿಗೂ, ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿ, ಅವರನ್ನು ಬೇರೆ ಬೇರೆ ಮಾಡಿದನು.</verse>
				<verse number="2">ದಾಸಿಯರನ್ನೂ, ಅವರ ಮಕ್ಕಳನ್ನೂ ಮುಂದುಗಡೆಯಲ್ಲಿಯೂ; ಅವರ ಹಿಂದೆ ಲೇಯಳನ್ನೂ, ಆಕೆಯ ಮಕ್ಕಳನ್ನೂ; ಕಟ್ಟಕಡೆಯಲ್ಲಿ ರಾಹೇಲಳನ್ನೂ, ಯೋಸೇಫನನ್ನೂ ಇರಿಸಿದನು.</verse>
				<verse number="3">ತಾನೇ ಅವರ ಮುಂದಾಗಿ ಹೋಗಿ ತನ್ನ ಸಹೋದರನ ಬಳಿಗೆ ಬರುವವರೆಗೆ ಏಳು ಸಾರಿ ನೆಲದವರೆಗೆ ಬಗ್ಗಿದನು.</verse>
				<verse number="4">ಆಗ ಏಸಾವನು ಅವನನ್ನು ಎದುರುಗೊಳ್ಳುವುದಕ್ಕೆ ಓಡಿಬಂದು, ಅವನನ್ನು ಅಪ್ಪಿಕೊಂಡು, ಅವನ ಕೊರಳಿನ ಮೇಲೆ ಬಿದ್ದು, ಅವನಿಗೆ ಮುದ್ದಿಟ್ಟನು. ಅವರಿಬ್ಬರೂ ಅತ್ತರು.</verse>
				<verse number="5">ಆಗ ಏಸಾವನು ತನ್ನ ದೃಷ್ಟಿ ಹರಿಸಿ, ಆ ಸ್ತ್ರೀಯರನ್ನೂ, ಮಕ್ಕಳನ್ನೂ ನೋಡಿ, “ನಿನ್ನ ಜೊತೆಯಲ್ಲಿರುವ ಇವರು ಯಾರು?” ಎಂದು ಕೇಳಿದನು. ಅದಕ್ಕವನು, “ದೇವರು ನಿನ್ನ ದಾಸನಿಗೆ ಕೃಪೆಯಿಂದ ಕೊಟ್ಟ ಮಕ್ಕಳು,” ಎಂದನು.</verse>
				<verse number="6">ಆಗ ದಾಸಿಯರೂ, ಅವರ ಮಕ್ಕಳೂ ಹತ್ತಿರ ಬಂದು ಅವನಿಗೆ ಅಡ್ಡಬಿದ್ದರು.</verse>
				<verse number="7">ಲೇಯಳು ಸಹ ತನ್ನ ಮಕ್ಕಳೊಂದಿಗೆ ಹತ್ತಿರ ಬಂದು ಅಡ್ಡಬಿದ್ದಳು. ತರುವಾಯ ಯೋಸೇಫನೂ, ರಾಹೇಲಳೂ ಬಂದು ಅಡ್ಡಬಿದ್ದರು.</verse>
				<verse number="8">ಆಗ ಏಸಾವನು, “ನಾನು ದಾರಿಯಲ್ಲಿ ಕಂಡ ಪಶುಗಳ ಮಂದೆಗಳೆಲ್ಲಾ ಏತಕ್ಕೆ?” ಎಂದು ಕೇಳಿದನು. ಯಾಕೋಬನು, “ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ದಯೆ ದೊರಕುವುದಕ್ಕೋಸ್ಕರ,” ಎಂದನು.</verse>
				<verse number="9">ಅದಕ್ಕೆ ಏಸಾವನು, “ನನ್ನ ಸಹೋದರನೇ, ನನಗೆ ಸಾಕಷ್ಟು ಇದೆ. ನಿನಗೆ ಇದ್ದದ್ದು ನೀನೇ ಇಟ್ಟುಕೋ,” ಎಂದನು.</verse>
				<verse number="10">ಆಗ ಯಾಕೋಬನು, “ಹಾಗಲ್ಲ, ಈಗ ನಿನ್ನ ದೃಷ್ಟಿಯಲ್ಲಿ ನಾನು ದಯೆ ಹೊಂದಿದ್ದೆನಾದರೆ, ನನ್ನ ಕಾಣಿಕೆಯನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು. ಏಕೆಂದರೆ ನಾನು ದೇವರ ಮುಖವನ್ನು ಕಂಡಂತೆ, ನಿನ್ನ ಮುಖವನ್ನು ಕಂಡದ್ದಕ್ಕಾಗಿಯೂ, ನೀನು ನನ್ನನ್ನು ಮೆಚ್ಚಿದ್ದಕ್ಕಾಗಿಯೂ,</verse>
				<verse number="11">ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಸ್ವೀಕರಿಸಬೇಕೆಂದು ಬೇಡುತ್ತೇನೆ. ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇವೆ,” ಎಂದು ಹೇಳಿ, ಅವನನ್ನು ಬಲವಂತ ಮಾಡಿದ್ದರಿಂದ ಏಸಾವನು ಅದನ್ನು ತೆಗೆದುಕೊಂಡನು.</verse>
				<verse number="12">ತರುವಾಯ ಏಸಾವನು, “ನಾವು ಮುಂದಕ್ಕೆ ಪ್ರಯಾಣವನ್ನು ಬೆಳೆಸೋಣ. ನಾನು ನಿನ್ನ ಮುಂದೆ ಹೋಗುವೆನು,” ಎಂದನು.</verse>
				<verse number="13">ಅದಕ್ಕೆ ಯಾಕೋಬನು ಅವನಿಗೆ, “ಮಕ್ಕಳು ಎಳೆಯ ಪ್ರಾಯದವರಿದ್ದಾರೆ, ಇದಲ್ಲದೆ ಎಳೆಯ ದನಕುರಿಗಳು ನನ್ನ ಬಳಿಯಲ್ಲಿರುವುದು ನನ್ನ ಒಡೆಯನಿಗೆ ತಿಳಿದಿದೆ. ಒಂದು ದಿನ ಹೆಚ್ಚಾಗಿ ಅವುಗಳನ್ನು ನಡೆಸಿದರೆ, ಎಲ್ಲಾ ಮಂದೆಯು ಸತ್ತು ಹೋದಾವು.</verse>
				<verse number="14">ಆದ್ದರಿಂದ ನನ್ನ ಒಡೆಯನೇ, ನೀನು ನಿನ್ನ ಸೇವಕನಿಗಿಂತಲೂ ಮುಂಚೆ ಹೋಗಬಹುದು. ನಾನು ನನ್ನ ಒಡೆಯನ ಬಳಿಗೆ ಸೇಯೀರಿಗೆ ಬರುವವರೆಗೆ, ನನ್ನ ಮುಂದಿರುವ ಮಂದೆಗಳ ನಡಿಗೆಗೂ, ಮಕ್ಕಳ ನಡಿಗೆಗೂ ತಕ್ಕ ಹಾಗೆ ಮೆಲ್ಲಗೆ ನಡೆದು ಬರುವೆನು,” ಎಂದನು.</verse>
				<verse number="15">ಅದಕ್ಕೆ ಏಸಾವನು, “ನನ್ನ ಬಳಿಯಲ್ಲಿರುವ ಜನರಲ್ಲಿ ಕೆಲವರನ್ನು ನಿನ್ನ ಬಳಿಯಲ್ಲಿ ಬಿಟ್ಟು ಹೋಗುತ್ತೇನೆ,” ಅನ್ನಲು. ಯಾಕೋಬನು, “ಅದರ ಅಗತ್ಯವೇನು? ನನ್ನ ಒಡೆಯನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ,” ಎಂದನು.</verse>
				<verse number="16">ಹೀಗೆ ಏಸಾವನು ಆ ದಿನವೇ ತನ್ನ ಮಾರ್ಗವಾಗಿ ಸೇಯೀರಿಗೆ ಹಿಂದಿರುಗಿ ಹೋದನು.</verse>
				<verse number="17">ಯಾಕೋಬನು ಪ್ರಯಾಣಮಾಡಿ, ಸುಕ್ಕೋತಿಗೆ ಹೋಗಿ, ಮನೆಯನ್ನು ಕಟ್ಟಿಸಿಕೊಂಡನು. ಇದಲ್ಲದೆ ತನ್ನ ಪಶುಗಳಿಗೆ ಹಟ್ಟಿಗಳನ್ನು ಮಾಡಿಸಿದನು. ಆದ್ದರಿಂದ ಆ ಸ್ಥಳಕ್ಕೆ ಸುಕ್ಕೋತ್ ಎಂದು ಹೆಸರಾಯಿತು.</verse>
				<verse number="18">ಯಾಕೋಬನು ಪದ್ದನ್ ಅರಾಮಿನಿಂದ ಬಂದು, ಕಾನಾನ್ ದೇಶದ ಶೆಕೆಮ್ ಪಟ್ಟಣವನ್ನು ಸೇರಿ, ಅದರ ಮುಂದೆ ತನ್ನ ಗುಡಾರಗಳನ್ನು ಹಾಕಿದನು.</verse>
				<verse number="19">ಅವನು ತನ್ನ ಗುಡಾರಗಳನ್ನು ಹಾಕಿದ ಭೂಮಿಯನ್ನು ಶೆಕೆಮಿನ ತಂದೆ ಹಮೋರನ ಮಕ್ಕಳ ಕೈಯಿಂದ ನೂರು ನಾಣ್ಯಗಳಿಗೆ ಕೊಂಡುಕೊಂಡನು.</verse>
				<verse number="20">ಅಲ್ಲಿ ಬಲಿಪೀಠವನ್ನು ಕಟ್ಟಿಸಿ ಅದಕ್ಕೆ, ಏಲೆಲೋಹೇ ಇಸ್ರಾಯೇಲ್ ಎಂದು ಹೆಸರಿಟ್ಟನು.</verse>
			</chapter>
			<chapter number="34">
				<verse number="1">ಲೇಯಳು ಯಾಕೋಬನಿಗೆ ಹೆತ್ತ ಮಗಳಾದ ದೀನಳು ದೇಶದ ಸ್ತ್ರೀಯರನ್ನು ನೋಡುವುದಕ್ಕಾಗಿ ಹೊರಗೆ ಹೋದಳು.</verse>
				<verse number="2">ದೇಶದ ಪ್ರಭುವಾಗಿದ್ದ ಹಿವ್ವಿಯನಾದ ಹಮೋರನ ಮಗ ಶೆಕೆಮನು ಆಕೆಯನ್ನು ತೆಗೆದುಕೊಂಡುಹೋಗಿ ಮಾನಭಂಗ ಮಾಡಿದನು.</verse>
				<verse number="3">ಅವನ ಮನಸ್ಸು ಯಾಕೋಬನ ಮಗಳಾದ ದೀನಳ ಮೇಲೆಯೇ ಇತ್ತು. ಅವನು ಆ ಹುಡುಗಿಯನ್ನು ಪ್ರೀತಿಸಿ, ಆಕೆಯೊಂದಿಗೆ ಅನುರಾಗದಿಂದ ಮಾತನಾಡಿದನು.</verse>
				<verse number="4">ಶೆಕೆಮನು ತನ್ನ ತಂದೆ ಹಮೋರನಿಗೆ, “ಈ ಹುಡುಗಿಯನ್ನು ನನಗೆ ಹೆಂಡತಿಯಾಗಿರುವಂತೆ ಹೇಳು,” ಎಂದನು.</verse>
				<verse number="5">ಯಾಕೋಬನು ತನ್ನ ಮಗಳಾದ ದೀನಳನ್ನು ಶೆಕೆಮನು ಕೆಡಿಸಿದ್ದಾನೆಂದು ಕೇಳಿದಾಗ, ಅವನ ಮಕ್ಕಳು ಅವನ ಪಶುಗಳ ಸಂಗಡ ಹೊಲದಲ್ಲಿದ್ದರು. ಅವರು ಬರುವವರೆಗೆ ಯಾಕೋಬನು ಸುಮ್ಮನಿದ್ದನು.</verse>
				<verse number="6">ಆಗ ಶೆಕೆಮನ ತಂದೆ ಹಮೋರನು ಯಾಕೋಬನ ಸಂಗಡ ಮಾತನಾಡುವುದಕ್ಕೆ ಬಂದನು.</verse>
				<verse number="7">ಯಾಕೋಬನ ಮಕ್ಕಳು ಆ ವಿಷಯವನ್ನು ಕೇಳಿದ ಕೂಡಲೇ ಹೊಲದಿಂದ ಬಂದರು. ಶೆಕೆಮನು ಯಾಕೋಬನ ಮಗಳ ಸಂಗಡ ಮಲಗಿ, ಇಸ್ರಾಯೇಲಿನಲ್ಲಿ ಅವಮಾನಕರವಾದದ್ದನ್ನು ಮಾಡಿದ್ದರಿಂದ, ಅವರು ವ್ಯಸನಪಟ್ಟು, ಬಹಳ ಕೋಪಗೊಂಡರು. ಅದು ಹಾಗೆ ಆಗಬಾರದಾಗಿತ್ತು.</verse>
				<verse number="8">ಹಮೋರನು ಅವರಿಗೆ, “ನನ್ನ ಮಗ ಶೆಕೆಮನ ಮನಸ್ಸು ನಿಮ್ಮ ಮಗಳನ್ನು ಆಶಿಸುತ್ತದೆ. ಆಕೆಯನ್ನು ಅವನಿಗೆ ಹೆಂಡತಿಯಾಗಿ ಕೊಡಿರಿ, ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.</verse>
				<verse number="9">ನೀವು ನಮ್ಮೊಂದಿಗೆ ಮದುವೆ ಸಂಬಂಧ ಮಾಡಿಕೊಳ್ಳಿರಿ. ನಿಮ್ಮ ಪುತ್ರಿಯರನ್ನು ನಮಗೆ ಕೊಡಿರಿ, ನಮ್ಮ ಪುತ್ರಿಯರನ್ನು ನೀವು ಮದುವೆಯಾಗಿರಿ.</verse>
				<verse number="10">ಇದಲ್ಲದೆ ನೀವು ನಮ್ಮ ಸಂಗಡ ವಾಸಮಾಡಿರಿ. ದೇಶವು ನಿಮ್ಮ ಮುಂದೆ ಇದೆ. ನೀವು ಅದರಲ್ಲಿ ವಾಸಿಸಿ, ಅದರಲ್ಲಿ ವ್ಯಾಪಾರಮಾಡಿ, ಅದರಿಂದ ಆಸ್ತಿಯನ್ನು ಮಾಡಿಕೊಳ್ಳಿರಿ,” ಎಂದನು.</verse>
				<verse number="11">ಬಳಿಕ ಶೆಕೆಮನು ಆಕೆಯ ತಂದೆಗೂ, ಆಕೆಯ ಸಹೋದರರಿಗೂ, “ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ, ನೀವು ಕೇಳಿದ್ದನ್ನು ನಾನು ನಿಮಗೆ ಕೊಡುವೆನು.</verse>
				<verse number="12">ಆದರೆ ಆ ಹುಡುಗಿಯನ್ನು ನನಗೆ ಹೆಂಡತಿಯಾಗಿ ಕೊಡಿರಿ,” ಎಂದನು.</verse>
				<verse number="13">ಆಗ ಯಾಕೋಬನ ಮಕ್ಕಳು ಶೆಕೆಮನಿಗೂ, ಅವನ ತಂದೆ ಹಮೋರನಿಗೂ ವಂಚನೆಯ ಉತ್ತರವನ್ನು ಕೊಟ್ಟರು. ಏಕೆಂದರೆ ಅವನು ತಮ್ಮ ತಂಗಿ ದೀನಳನ್ನು ಕೆಡಿಸಿದ್ದನು.</verse>
				<verse number="14">ಯಾಕೋಬನ ಮಕ್ಕಳು ಅವರಿಗೆ, “ನಾವು ಈ ಕಾರ್ಯವನ್ನು ಮಾಡಲಾರೆವು. ಸುನ್ನತಿ ಇಲ್ಲದ ಮನುಷ್ಯನಿಗೆ ನಮ್ಮ ತಂಗಿಯನ್ನು ಕೊಡಲಾರೆವು. ಅದು ನಮಗೆ ಅವಮಾನ.</verse>
				<verse number="15">ಆದರೆ ನೀವು ನಮ್ಮ ಹಾಗಿದ್ದು, ನಿಮ್ಮಲ್ಲಿರುವ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಂಡರೆ ಮಾತ್ರ ನಾವು ನಿಮಗೆ ಒಪ್ಪುವೆವು.</verse>
				<verse number="16">ನಮ್ಮ ಪುತ್ರಿಯರನ್ನು ನಿಮಗೆ ಕೊಟ್ಟು, ನಿಮ್ಮ ಪುತ್ರಿಯರನ್ನು ತೆಗೆದುಕೊಳ್ಳುವೆವು. ಇದಲ್ಲದೆ ನಾವು ನಿಮ್ಮೊಂದಿಗೆ ವಾಸಮಾಡಿ, ಒಂದೇ ಜನಾಂಗವಾಗುವೆವು.</verse>
				<verse number="17">ಆದರೆ ನೀವು ನಮ್ಮ ಮಾತನ್ನು ಕೇಳದೆ, ಸುನ್ನತಿ ಮಾಡಿಸಿಕೊಳ್ಳದೆ ಹೋದರೆ, ನಮ್ಮ ಹುಡುಗಿಯನ್ನು ನಾವು ಕರೆದುಕೊಂಡು ಹೋಗಿಬಿಡುತ್ತೇವೆ,” ಎಂದು ಹೇಳಿದರು.</verse>
				<verse number="18">ಅವರ ಮಾತುಗಳು ಹಮೋರನಿಗೂ, ಅವನ ಮಗ ಶೆಕೆಮನಿಗೂ ಯೋಗ್ಯವಾಗಿ ಕಂಡವು.</verse>
				<verse number="19">ಆ ಯೌವನಸ್ಥನು ಯಾಕೋಬನ ಮಗಳನ್ನು ಮೆಚ್ಚಿದ್ದರಿಂದ, ಆ ಕಾರ್ಯವನ್ನು ಮಾಡುವುದಕ್ಕೆ ಹಿಂಜರಿಯಲಿಲ್ಲ. ಅವನು ತನ್ನ ತಂದೆಯ ಮನೆಯವರೆಲ್ಲರಿಗಿಂತ ಗೌರವವುಳ್ಳವನಾಗಿದ್ದನು.</verse>
				<verse number="20">ಆಗ ಹಮೋರನೂ, ಅವನ ಮಗ ಶೆಕೆಮನೂ ತಮ್ಮ ಪಟ್ಟಣ ದ್ವಾರದ ಬಳಿಗೆ ಬಂದು, ತಮ್ಮ ಪಟ್ಟಣದ ಜನರ ಸಂಗಡ ಮಾತನಾಡಿ ಅವರಿಗೆ,</verse>
				<verse number="21">“ಈ ಜನರು ನಮ್ಮ ಸಂಗಡ ಸಮಾಧಾನವಾಗಿದ್ದಾರೆ, ಆದ್ದರಿಂದ ಅವರು ದೇಶದಲ್ಲಿ ವಾಸಮಾಡಿ, ಅದರಲ್ಲಿ ವ್ಯಾಪಾರಮಾಡಲಿ. ದೇಶವು ಅವರಿಗಾಗಿ ಸಾಕಷ್ಟು ವಿಸ್ತಾರವಾಗಿದೆ. ಅವರ ಪುತ್ರಿಯರನ್ನು ನಮಗೆ ಹೆಂಡತಿಯರನ್ನಾಗಿ ಮಾಡಿಕೊಳ್ಳೋಣ ಮತ್ತು ನಮ್ಮ ಪುತ್ರಿಯರನ್ನು ಅವರಿಗೆ ಕೊಡೋಣ.</verse>
				<verse number="22">ಸುನ್ನತಿ ಮಾಡಿಸಿಕೊಂಡರೆ ಮಾತ್ರ ಅವರು ನಮ್ಮ ಸಂಗಡ ವಾಸಮಾಡುವುದಕ್ಕೂ, ಒಂದೇ ಜನಾಂಗವಾಗುವುದಕ್ಕೂ ಒಪ್ಪುವರು.</verse>
				<verse number="23">ಅವರ ಮಂದೆಗಳೂ, ಅವರ ಸಂಪತ್ತೂ, ಅವರ ಎಲ್ಲಾ ಪಶುಗಳೂ ನಮ್ಮದಾಗುವುವು ಅಲ್ಲವೋ? ಅವರಿಗೆ ನಾವು ಒಪ್ಪಿಕೊಂಡರೆ ಮಾತ್ರ, ಅವರು ನಮ್ಮ ಸಂಗಡ ವಾಸಿಸುವರು,” ಎಂದರು.</verse>
				<verse number="24">ಆಗ ಪಟ್ಟಣದ ದ್ವಾರದಲ್ಲಿ ಹೋಗುವ ಗಂಡಸರೆಲ್ಲರೂ ಹಮೋರನೂ, ಅವನ ಮಗ ಶೆಕೆಮನೂ ಹೇಳಿದ ಮಾತುಗಳನ್ನು ಕೇಳಿ, ಒಪ್ಪಿಕೊಂಡರು. ಹೀಗೆ ಪಟ್ಟಣದಲ್ಲಿದ್ದ ಎಲ್ಲಾ ಗಂಡಸರು ಸುನ್ನತಿ ಮಾಡಿಸಿಕೊಂಡರು.</verse>
				<verse number="25">ಮೂರನೆಯ ದಿನದಲ್ಲಿ ಅವರಿಗೆ ನೋವುಂಟಾದಾಗ, ಯಾಕೋಬನ ಮಕ್ಕಳಲ್ಲಿ ಇಬ್ಬರು ಅಂದರೆ, ದೀನಳ ಸಹೋದರರಾದ ಸಿಮೆಯೋನನೂ, ಲೇವಿಯೂ ತಮ್ಮ ತಮ್ಮ ಖಡ್ಗಗಳನ್ನು ತೆಗೆದುಕೊಂಡು ಧೈರ್ಯವಾಗಿ ಪಟ್ಟಣಕ್ಕೆ ಬಂದು, ಗಂಡಸರನ್ನೆಲ್ಲಾ ಕೊಂದುಹಾಕಿದರು.</verse>
				<verse number="26">ಹಮೋರನನ್ನೂ, ಅವನ ಮಗನಾದ ಶೆಕೆಮನನ್ನೂ ಅವರು ಖಡ್ಗದಿಂದ ಕೊಂದುಹಾಕಿ, ದೀನಳನ್ನು ಶೆಕೆಮನ ಮನೆಯಿಂದ ಕರೆದುಕೊಂಡು ಹೊರಗೆ ಹೋದರು.</verse>
				<verse number="27">ಅವರು ತಮ್ಮ ಸಹೋದರಿಯನ್ನು ಕೆಡಿಸಿದ್ದರಿಂದ ಯಾಕೋಬನ ಮಕ್ಕಳು ಬಂದು ಆ ಊರನ್ನೇ ಕೊಳ್ಳೆಹೊಡೆದರು.</verse>
				<verse number="28">ಪಟ್ಟಣದಲ್ಲಿಯೂ, ಹೊಲದಲ್ಲಿಯೂ ಇದ್ದ ಅವರ ಕುರಿ, ದನ, ಕತ್ತೆಗಳನ್ನು ತೆಗೆದುಕೊಂಡರು.</verse>
				<verse number="29">ಅವರ ಎಲ್ಲಾ ಆಸ್ತಿಯನ್ನೂ, ಅವರ ಎಲ್ಲಾ ಚಿಕ್ಕ ಮಕ್ಕಳನ್ನೂ, ಅವರ ಹೆಂಡತಿಯರನ್ನೂ ಸೆರೆಹಿಡಿದು, ಮನೆಯಲ್ಲಿ ಇದ್ದದ್ದೆಲ್ಲವನ್ನೂ ಅವರು ಕೊಳ್ಳೆಹೊಡೆದರು.</verse>
				<verse number="30">ಆಗ ಯಾಕೋಬನು ಸಿಮೆಯೋನನಿಗೂ, ಲೇವಿಗೂ, “ನೀವು ನನ್ನನ್ನು ಈ ದೇಶದ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯವಾಗುವಂತೆ ಮಾಡಿ, ನನ್ನನ್ನು ಕಳವಳಪಡಿಸಿದಿರಿ. ನಾವು ಸ್ವಲ್ಪ ಜನರು, ಹೀಗಿರುವಲ್ಲಿ ಅವರು ನನಗೆ ವಿರೋಧವಾಗಿ ಕೂಡಿಕೊಂಡು ನನ್ನನ್ನು ದಾಳಿಮಾಡುವರು. ಆಗ ನಾನೂ, ನನ್ನ ಮನೆಯವರೂ ನಾಶವಾಗುವೆವು,” ಎಂದನು.</verse>
				<verse number="31">ಆದರೆ ಅವರು, “ಅವನು ನಮ್ಮ ತಂಗಿಯನ್ನು ವೇಶ್ಯೆಯಂತೆ ನಡೆಸಬಹುದೋ?” ಎಂದರು.</verse>
			</chapter>
			<chapter number="35">
				<verse number="1">ದೇವರು ಯಾಕೋಬನಿಗೆ, “ನೀನು ಇಲ್ಲಿಂದ ಬೇತೇಲಿಗೆ ಹೋಗಿ ಅಲ್ಲಿ ವಾಸಮಾಡು, ನಿನ್ನ ಸಹೋದರ ಏಸಾವನ ಎದುರಿನಿಂದ ಓಡಿ ಹೋಗುತ್ತಿದ್ದಾಗ, ನಿನಗೆ ಕಾಣಿಸಿಕೊಂಡ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟು,” ಎಂದರು.</verse>
				<verse number="2">ಆಗ ಯಾಕೋಬನು ತನ್ನ ಮನೆಯವರಿಗೂ, ತನ್ನ ಸಂಗಡ ಇದ್ದವರೆಲ್ಲರಿಗೂ, “ನಿಮ್ಮ ಮಧ್ಯದಲ್ಲಿರುವ ಅನ್ಯದೇವರುಗಳನ್ನು ತೆಗೆದುಹಾಕಿ ಶುದ್ಧರಾಗಿರಿ, ನೀವು ನಿಮ್ಮ ಬಟ್ಟೆಗಳನ್ನು ಬದಲಾಯಿಸಿರಿ.</verse>
				<verse number="3">ನಾವು ಇಲ್ಲಿಂದ ಹೊರಟು ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಬಲಿಪೀಠವನ್ನು ಕಟ್ಟುವೆನು,” ಎಂದನು.</verse>
				<verse number="4">ಆಗ ಅವರು ತಮ್ಮ ಬಳಿಯಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ, ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ತೆಗೆದು, ಯಾಕೋಬನಿಗೆ ಕೊಟ್ಟರು. ಅವನು ಅವುಗಳನ್ನು ಶೆಕೆಮ್ ಊರಿಗೆ ಸಮೀಪವಾಗಿದ್ದ ಏಲಾ ಮರದ ಕೆಳಗೆ ಹೂಳಿಟ್ಟರು.</verse>
				<verse number="5">ತರುವಾಯ ಅವರು ಮುಂದೆ ಪ್ರಯಾಣಮಾಡಿದರು. ಆಗ ಸುತ್ತಲಿರುವ ಪಟ್ಟಣಗಳವರ ಮೇಲೆ ದೇವರ ಭಯವು ಇದ್ದುದರಿಂದ, ಅವರು ಯಾಕೋಬನ ಮಕ್ಕಳನ್ನು ಬೆನ್ನಟ್ಟಿ ಬರಲಿಲ್ಲ.</verse>
				<verse number="6">ಹೀಗೆ ಯಾಕೋಬನು ತನ್ನ ಸಂಗಡ ಇದ್ದ ಎಲ್ಲಾ ಜನರಸಹಿತವಾಗಿ ಕಾನಾನ್ ದೇಶದಲ್ಲಿರುವ ಬೇತೇಲ್ ಎಂಬ ಲೂಜಿಗೆ ಬಂದನು.</verse>
				<verse number="7">ಅಲ್ಲಿ ಅವನು ಬಲಿಪೀಠವನ್ನು ಕಟ್ಟಿ, ತಾನು ತನ್ನ ಸಹೋದರನ ಬಳಿಯಿಂದ ಓಡಿಹೋದಾಗ, ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.</verse>
				<verse number="8">ಆಗ ರೆಬೆಕ್ಕಳ ದಾದಿಯಾಗಿದ್ದ ದೆಬೋರಳು ಮರಣಹೊಂದಿದಳು. ಬೇತೇಲಿನ ಕೆಳಗಿದ್ದ ಏಲಾ ಮರದ ಬುಡದಲ್ಲಿ ಆಕೆಯನ್ನು ಹೂಳಿಟ್ಟರು. ಆ ಸ್ಥಳಕ್ಕೆ ಅಲ್ಲೋನ್ ಬಾಕೂತ್ ಎಂದು ಹೆಸರಾಯಿತು.</verse>
				<verse number="9">ಯಾಕೋಬನು ಪದ್ದನ್ ಅರಾಮಿನಿಂದ ಬಂದಾಗ, ದೇವರು ಅವನಿಗೆ ಇನ್ನೊಂದು ಸಾರಿ ಪ್ರತ್ಯಕ್ಷನಾಗಿ, ಅವನನ್ನು ಆಶೀರ್ವದಿಸಿದರು.</verse>
				<verse number="10">ದೇವರು ಅವನಿಗೆ, “ಈಗ ನಿನಗೆ ಯಾಕೋಬನೆಂದು ಹೆಸರಿರುವುದು. ಆದರೆ ಇನ್ನು ಮೇಲೆ ನೀನು ಯಾಕೋಬನೆಂದು ಕರೆಸಿಕೊಳ್ಳದೆ, ‘ಇಸ್ರಾಯೇಲ್,’ ಎಂದು ಕರೆಸಿಕೊಳ್ಳುವೆ,” ಎಂದು ಹೇಳಿ, ಅವನಿಗೆ ಇಸ್ರಾಯೇಲ್ ಎಂದು ಹೆಸರಿಟ್ಟರು.</verse>
				<verse number="11">ದೇವರು ಅವನಿಗೆ, “ಸರ್ವಶಕ್ತ ದೇವರು ನಾನೇ. ನೀನು ಅಭಿವೃದ್ಧಿಯಾಗಿ, ನಿನ್ನ ಸಂತಾನವು ಹೆಚ್ಚಲಿ. ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವುವು. ಅರಸರು ನಿನ್ನಿಂದ ಹುಟ್ಟುವರು.</verse>
				<verse number="12">ಇದಲ್ಲದೆ ಅಬ್ರಹಾಮನಿಗೂ, ಇಸಾಕನಿಗೂ ನಾನು ಕೊಟ್ಟ ದೇಶವನ್ನು ನಿನಗೆ ಕೊಡುವೆನು. ನಿನ್ನ ತರುವಾಯ ನಿನ್ನ ಸಂತತಿಗೂ ಈ ದೇಶವನ್ನು ಕೊಡುವೆನು,” ಎಂದರು.</verse>
				<verse number="13">ದೇವರು ಅವನ ಸಂಗಡ ಮಾತನಾಡಿದ ಸ್ಥಳದಿಂದ ಮೇಲಕ್ಕೇರಿ ಹೋದರು.</verse>
				<verse number="14">ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ, ಆ ಸ್ಥಳದಲ್ಲಿ ಸ್ತಂಭವನ್ನು ಅಂದರೆ ಕಲ್ಲಿನ ಸ್ತಂಭವನ್ನು ನಿಲ್ಲಿಸಿ, ಪಾನಾರ್ಪಣೆ ಮಾಡಿ, ಅದರ ಮೇಲೆ ಎಣ್ಣೆಯನ್ನು ಹೊಯ್ದನು.</verse>
				<verse number="15">ದೇವರು ತನ್ನ ಸಂಗಡ ಮಾತನಾಡಿದ ಸ್ಥಳಕ್ಕೆ ಯಾಕೋಬನು ಬೇತೇಲ್ ಎಂದು ಹೆಸರಿಟ್ಟನು.</verse>
				<verse number="16">ಬೇತೇಲಿನಿಂದ ಅವರು ಪ್ರಯಾಣಮಾಡಿ, ಎಫ್ರಾತೂರಿಗೆ ಇನ್ನೂ ಸ್ವಲ್ಪ ದೂರ ಇರುವಾಗ, ರಾಹೇಲಳು ಪ್ರಸವವೇದನೆಯಿಂದ ಕಷ್ಟಪಟ್ಟಳು.</verse>
				<verse number="17">ಹೆರುವುದರಲ್ಲಿ ಆಕೆಯು ಕಷ್ಟಪಡುತ್ತಿದ್ದಾಗ, ಸೂಲಗಿತ್ತಿಯು ಅವಳಿಗೆ, “ನೀನು ಭಯಪಡಬೇಡ, ಈ ಮಗನನ್ನು ಸಹ ನೀನು ಪಡೆಯುವೆ,” ಎಂದಳು.</verse>
				<verse number="18">ಆದರೆ ರಾಹೇಲಳು ಸತ್ತುಹೋದಳು. ಅವಳು ಪ್ರಾಣಬಿಡುವಾಗ, ಮಗನಿಗೆ ಬೆನೋನಿ ಎಂದು ಹೆಸರಿಟ್ಟಳು, ಆದರೆ ಅವನ ತಂದೆ ಅವನಿಗೆ ಬೆನ್ಯಾಮೀನ್ ಎಂದು ಹೆಸರಿಟ್ಟನು.</verse>
				<verse number="19">ಸತ್ತು ಹೋದ ರಾಹೇಲಳನ್ನು ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಹೂಳಿಟ್ಟರು.</verse>
				<verse number="20">ಯಾಕೋಬನು ಅವಳ ಸಮಾಧಿಯ ಮೇಲೆ ಒಂದು ಸ್ತಂಭವನ್ನು ನೆಟ್ಟನು. ಅದೇ ಇಂದಿನವರೆಗೂ ರಾಹೇಲಳ ಸಮಾಧಿಯ ಸ್ತಂಭವಾಗಿದೆ.</verse>
				<verse number="21">ಇಸ್ರಾಯೇಲನು ಪ್ರಯಾಣಮಾಡಿ ಮಿಗ್ದಲ್ ಏದರಿನ ಆಚೆ ತನ್ನ ಗುಡಾರವನ್ನು ಹಾಕಿದನು.</verse>
				<verse number="22">ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ, ರೂಬೇನನು ಹೋಗಿ ತನ್ನ ತಂದೆಯ ಉಪಪತ್ನಿ ಬಿಲ್ಹಳ ಸಂಗಡ ಮಲಗಿದನು. ಈ ವಿಷಯ ಇಸ್ರಾಯೇಲನಿಗೆ ತಿಳಿಯಿತು. ಯಾಕೋಬನಿಗೆ ಹನ್ನೆರಡು ಮಂದಿ ಪುತ್ರರು ಇದ್ದರು.</verse>
				<verse number="23">ಅವರಲ್ಲಿ ಲೇಯಳ ಪುತ್ರರು: ಯಾಕೋಬನ ಚೊಚ್ಚಲ ಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.</verse>
				<verse number="24">ರಾಹೇಲಳ ಪುತ್ರರು: ಯೋಸೇಫ್ ಮತ್ತು ಬೆನ್ಯಾಮೀನ್.</verse>
				<verse number="25">ರಾಹೇಲಳ ದಾಸಿ ಬಿಲ್ಹಳ ಪುತ್ರರು: ದಾನ್, ನಫ್ತಾಲಿ.</verse>
				<verse number="26">ಲೇಯಳ ದಾಸಿ ಜಿಲ್ಪಳ ಪುತ್ರರು: ಗಾದ್ ಮತ್ತು ಆಶೇರ್. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು.</verse>
				<verse number="27">ಯಾಕೋಬನು ಮಮ್ರೆಯಲ್ಲಿದ್ದ ತನ್ನ ತಂದೆ ಇಸಾಕನ ಬಳಿಗೆ ಅಬ್ರಹಾಮನೂ, ಇಸಾಕನೂ ಪ್ರವಾಸಿಗರಾಗಿ ವಾಸವಾಗಿದ್ದ ಹೆಬ್ರೋನ್ ಎಂಬ ಕಿರ್ಯತ್ ಅರ್ಬ ಪಟ್ಟಣಕ್ಕೆ ಬಂದನು.</verse>
				<verse number="28">ಆಗ ಇಸಾಕನು ನೂರ ಎಂಬತ್ತು ವರ್ಷದವನಾಗಿದ್ದನು.</verse>
				<verse number="29">ಇಸಾಕನು ಮುದುಕನಾಗಿಯೂ, ತುಂಬಾ ಆಯುಷ್ಯವುಳ್ಳವನಾಗಿಯೂ ಮರಣಹೊಂದಿ ತನ್ನ ಪಿತೃಗಳೊಂದಿಗೆ ಸೇರಿದನು. ಅವನ ಮಕ್ಕಳಾದ ಏಸಾವನೂ, ಯಾಕೋಬನೂ ಅವನನ್ನು ಸಮಾಧಿಮಾಡಿದರು.</verse>
			</chapter>
			<chapter number="36">
				<verse number="1">ಎದೋಮ್ ಎಂಬ ಏಸಾವನ ವಂಶಾವಳಿ ಇದು:</verse>
				<verse number="2">ಏಸಾವನು ಕಾನಾನ್ಯರ ಪುತ್ರಿಯರನ್ನು ಅಂದರೆ, ಹಿತ್ತಿಯನಾದ ಏಲೋನನ ಮಗಳಾದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿದ್ದ ಒಹೊಲೀಬಾಮ,</verse>
				<verse number="3">ಇಷ್ಮಾಯೇಲನ ಮಗಳೂ ನೆಬಾಯೋತನ ಸಹೋದರಿಯೂ ಆಗಿದ್ದ ಬಾಸೆಮತ್ ಇವರನ್ನು ಮದುವೆಯಾಗಿದ್ದನು.</verse>
				<verse number="4">ಆದಾಳು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಯೂವೇಲನನ್ನು ಹೆತ್ತಳು.</verse>
				<verse number="5">ಒಹೊಲೀಬಾಮಳು ಯೆಯೂಷನನ್ನು, ಯಳಾಮನನ್ನು, ಕೋರಹ ಇವರನ್ನು ಹೆತ್ತಳು. ಇವರು ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಪುತ್ರರು.</verse>
				<verse number="6">ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಪುತ್ರಪುತ್ರಿಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ಪಶುಗಳನ್ನೂ ಕಾನಾನ್ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು, ತನ್ನ ಸಹೋದರನಾದ ಯಾಕೋಬನ ಬಳಿಯಿಂದ ಸ್ವಲ್ಪ ದೂರವಿದ್ದ ಮತ್ತೊಂದು ಊರಿಗೆ ಹೋದನು.</verse>
				<verse number="7">ಏಕೆಂದರೆ ಅವರ ಸಂಪತ್ತು ಅವರು ಕೂಡಿ ಇರುವುದಕ್ಕೆ ಆಗದಷ್ಟು ಅಭಿವೃದ್ಧಿಯಾಗಿತ್ತು. ಅವರ ಪಶುಪ್ರಾಣಿಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.</verse>
				<verse number="8">ಹೀಗೆ ಎದೋಮನು ಎಂಬ ಏಸಾವನು ಸೇಯೀರ್ ಪರ್ವತದಲ್ಲಿ ವಾಸವಾಗಿದ್ದನು.</verse>
				<verse number="9">ಸೇಯೀರ್ ಪರ್ವತದಲ್ಲಿರುವ ಎದೋಮ್ಯರ ತಂದೆ ಏಸಾವನ ವಂಶಾವಳಿಗಳು ಇವೇ:</verse>
				<verse number="10">ಏಸಾವನ ಪುತ್ರರ ಹೆಸರುಗಳು ಯಾವುವೆಂದರೆ: ಏಸಾವನ ಹೆಂಡತಿಯಾಗಿರುವ ಆದಾ ಎಂಬಾಕೆಯ ಮಗನಾಗಿರುವ ಎಲೀಫಜನು, ಏಸಾವನ ಹೆಂಡತಿ ಬಾಸೆಮತಳ ಮಗ ರೆಯೂವೇಲನು.</verse>
				<verse number="11">ಎಲೀಫಜನ ಮಕ್ಕಳು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಗತಾಮ್, ಕೆನಜ್.</verse>
				<verse number="12">ತಿಮ್ನಾಳು ಏಸಾವನ ಮಗ ಎಲೀಫಜನಿಗೆ ಉಪಪತ್ನಿಯಾಗಿದ್ದು, ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾ ಎಂಬಾಕೆಯ ಪುತ್ರರು ಇವರೇ.</verse>
				<verse number="13">ರೆಯೂವೇಲನ ಮಕ್ಕಳು ಯಾರೆಂದರೆ: ನಹತ್, ಜೆರಹ, ಶಮ್ಮಾ ಮತ್ತು ಮಿಜ್ಜಾ, ಇವರು ಏಸಾವನ ಹೆಂಡತಿ ಬಾಸೆಮತಳ ಮೊಮ್ಮಕ್ಕಳು.</verse>
				<verse number="14">ಏಸಾವನ ಹೆಂಡತಿಯಾಗಿದ್ದ ಸಿಬೆಯೋನನ ಮಗಳಾಗಿರುವ ಅನಾಹಳ ಮಗಳಾದ ಒಹೊಲೀಬಾಮಳ ಪುತ್ರರು ಯಾರೆಂದರೆ: ಆಕೆಯು ಏಸಾವನಿಗೆ ಯೆಯೂಷ್, ಯಳಾಮ್ ಹಾಗೂ ಕೋರಹ ಇವರನ್ನು ಹೆತ್ತಳು.</verse>
				<verse number="15">ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್, ಓಮಾರ್, ಚೆಫೋ, ಕೆನಜ್,</verse>
				<verse number="16">ಕೋರಹ, ಗತಾಮ್, ಅಮಾಲೇಕ್, ಎದೋಮ್ಯ ದೇಶದಲ್ಲಿದ್ದ ಎಲೀಫಜನಿಂದ ಬಂದ ಮುಖಂಡರು ಇವರೇ. ಇವರು ಆದಾ ಎಂಬಾಕೆಯ ಮೊಮ್ಮಕ್ಕಳು.</verse>
				<verse number="17">ಏಸಾವನ ಮಗ ರೆಯೂವೇಲನ ಪುತ್ರರು ಯಾರೆಂದರೆ: ನಹತ್, ಜೆರಹ, ಶಮ್ಮಾ ಹಾಗೂ ಮಿಜ್ಜಾ; ಎದೋಮ್ ದೇಶದಲ್ಲಿದ್ದ ರೆವುಯೇಲನಿಂದ ಬಂದ ಮುಖಂಡರು ಇವರೇ. ಇವರು ಏಸಾವನ ಹೆಂಡತಿ ಬಾಸೆಮತಳ ಮೊಮ್ಮಕ್ಕಳು.</verse>
				<verse number="18">ಏಸಾವನ ಹೆಂಡತಿ ಒಹೊಲೀಬಾಮಳ ಪುತ್ರರು ಯಾರೆಂದರೆ: ಯೆಯೂಷ್, ಯಳಾಮ್ ಮತ್ತು ಕೋರಹ ಇವರೇ. ಇವರು ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳಿಂದ ಬಂದ ಮುಖಂಡರು.</verse>
				<verse number="19">ಇವರು ಎದೋಮ್ ಎಂಬ ಏಸಾವನ ಪುತ್ರರು. ಇವರು ಮುಖಂಡರಾಗಿದ್ದರು.</verse>
				<verse number="20">ದೇಶದಲ್ಲಿ ವಾಸಿಸುತ್ತಿದ್ದ ಹೋರಿಯನಾದ ಸೇಯೀರನ ಪುತ್ರರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,</verse>
				<verse number="21">ದೀಶೋನ್, ಏಚೆರ್, ದೀಶಾನ್ ಇವರು ಎದೋಮ್ ದೇಶದಲ್ಲಿದ್ದ ಸೇಯೀರನ ಮಕ್ಕಳಾದ ಹೋರಿಯರ ಮುಖಂಡರು.</verse>
				<verse number="22">ಲೋಟಾನನ ಪುತ್ರರು ಯಾರೆಂದರೆ: ಹೋರಿ ಮತ್ತು ಹೋಮಾಮ್. ಲೋಟಾನನಿಗೆ ತಿಮ್ನಾ ಎಂಬ ಸಹೋದರಿ ಇದ್ದಳು.</verse>
				<verse number="23">ಶೋಬಾಲನ ಮಕ್ಕಳು ಯಾರೆಂದರೆ: ಅಲ್ವಾನ್, ಮಾನಹತ್, ಏಬಾಲ್, ಶೆಫೋ ಮತ್ತು ಓನಾಮ್.</verse>
				<verse number="24">ಸಿಬೆಯೋನನ ಮಕ್ಕಳು: ಅಯ್ಯಾಹ ಮತ್ತು ಅನಾಹ ಎಂಬುವರು. ತನ್ನ ತಂದೆ ಸಿಬೆಯೋನನ ಕತ್ತೆಗಳನ್ನು ಕಾಯುವಾಗ ಕಾಡಿನಲ್ಲಿ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನೂ ಅರಣ್ಯದಲ್ಲಿ ಹೇಸರಗತ್ತೆಗಳನ್ನು ಕಂಡುಕೊಂಡವನು ಈ ಅನಾಹನೇ.</verse>
				<verse number="25">ಅನಾಹನ ಮಕ್ಕಳು ಯಾರೆಂದರೆ: ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮಳು.</verse>
				<verse number="26">ದೀಶೋನನ ಮಕ್ಕಳು ಯಾರೆಂದರೆ: ಹೆಮ್ದಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್.</verse>
				<verse number="27">ಏಚೆರನ ಮಕ್ಕಳು ಯಾರೆಂದರೆ: ಬಿಲ್ಹಾನ್, ಜಾವಾನ್ ಮತ್ತು ಆಕಾನ್.</verse>
				<verse number="28">ದೀಶಾನನ ಮಕ್ಕಳು ಯಾರೆಂದರೆ: ಊಚ್ ಮತ್ತು ಅರಾನ್.</verse>
				<verse number="29">ಹೋರಿಯರಿಂದ ಬಂದ ಮುಖಂಡರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,</verse>
				<verse number="30">ದೀಶೋನ್, ಏಚೆರ್, ದೀಶಾನ್. ಹೋರಿಯರಿಂದ ಹುಟ್ಟಿದ ಸೇಯೀರ್ ದೇಶದಲ್ಲಿ ಮುಖಂಡರು ಇವರೇ.</verse>
				<verse number="31">ಇಸ್ರಾಯೇಲರನ್ನು ಯಾವ ಅರಸನೂ ಆಳುವುದಕ್ಕಿಂತ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸರು ಇವರೇ.</verse>
				<verse number="32">ಎದೋಮಿನಲ್ಲಿ ಬೆಯೋರನ ಮಗನಾದ ಬೆಲಗನು ಆಳಿದನು. ಅವನ ಪಟ್ಟಣದ ಹೆಸರು ದಿನ್ಹಾಬಾ.</verse>
				<verse number="33">ಬೆಲಗನ ಮರಣದ ನಂತರ ಅವನ ಬದಲಾಗಿ ಬೊಚ್ರದವನಾದ ಜೆರಹನ ಮಗ ಯೋಬಾಬನು ಉತ್ತರಾಧಿಕಾರಿಯಾದನು.</verse>
				<verse number="34">ಯೋಬಾಬನ ಮರಣದ ನಂತರ ಅವನ ಬದಲಾಗಿ ತೇಮಾನೀಯರ ದೇಶದ ಹುಷಾಮನು ಅರಸನಾದನು.</verse>
				<verse number="35">ಹುಷಾಮನ ಮರಣದ ನಂತರ ಅವೀತದ ಬೆದದನ ಮಗ ಹದದ ಅರಸನಾದನು. ಇವನು ಮೋವಾಬ್ ದೇಶದಲ್ಲಿ ನಡೆದ ಯುದ್ಧದಲ್ಲಿ ಮಿದ್ಯಾನರನ್ನು ಸೋಲಿಸಿದ; ಅವನ ರಾಜಧಾನಿಯ ಹೆಸರು ಅವೀತ್.</verse>
				<verse number="36">ಹದದ ಮೃತನಾದ ಮೇಲೆ ಅವನ ಬದಲಾಗಿ ಮಸ್ರೇಕದವನಾದ ಸಮ್ಲಾಹನು ಅರಸನಾದನು.</verse>
				<verse number="37">ಸಮ್ಲಾಹನ ಮರಣದ ನಂತರ ಅವನ ಬದಲಾಗಿ ಯೂಫ್ರೇಟೀಸ್ ನದಿತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಅರಸನಾದನು.</verse>
				<verse number="38">ಸೌಲನು ಮೃತನಾದ ಮೇಲೆ ಅಕ್ಬೋರನ ಮಗ ಬಾಳ್ ಹಾನಾನ್ ಅರಸನಾದನು.</verse>
				<verse number="39">ಅಕ್ಬೋರನ ಮಗ ಬಾಳ್ ಹಾನಾನನು ಮೃತನಾದ ಮೇಲೆ ಅವನ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾವು. ಅವನ ಹೆಂಡತಿಯ ಹೆಸರು ಮೆಹೇಟಬೇಲ್. ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.</verse>
				<verse number="40">ಕುಟುಂಬ, ಸ್ಥಳ, ಹೆಸರುಗಳ ಪ್ರಕಾರವಾಗಿ ಏಸಾವನ ಮುಖಂಡರ ಹೆಸರುಗಳು ಯಾವುವೆಂದರೆ: ತಿಮ್ನಾ, ಅಲ್ವಾ, ಯೆತೇತ,</verse>
				<verse number="41">ಒಹೊಲೀಬಾಮ, ಏಲಾ, ಪೀನೋನ್,</verse>
				<verse number="42">ಕೆನಜ್, ತೇಮಾನ್, ಮಿಬ್ಜಾರ,</verse>
				<verse number="43">ಮಗ್ದೀಯೇಲ್ ಮತ್ತು ಗೀರಾಮ್ ಇವರೇ ತಮ್ಮ ನಿವಾಸಸ್ಥಳಗಳ ಪ್ರಕಾರ ಎದೋಮ್ಯರ ಮುಖಂಡರು. ಎದೋಮ್ಯರ ತಂದೆ ಏಸಾವನು ವಂಶಾವಳಿ ಇದೇ.</verse>
			</chapter>
			<chapter number="37">
				<verse number="1">ಯಾಕೋಬನು ತನ್ನ ತಂದೆ ಪ್ರವಾಸಿಯಾಗಿದ್ದ ಕಾನಾನ್ ದೇಶದಲ್ಲಿ ವಾಸವಾಗಿದ್ದನು.</verse>
				<verse number="2">ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ, ತನ್ನ ಸಹೋದರರ ಸಂಗಡ ಅಂದರೆ, ತನ್ನ ತಂದೆಯ ಹೆಂಡತಿಯರಾಗಿದ್ದ ಬಿಲ್ಹಳ ಮತ್ತು ಜಿಲ್ಪಳ ಮಕ್ಕಳ ಸಂಗಡ ಕುರಿಮಂದೆಗಳನ್ನು ಕಾಯುತ್ತಿದ್ದನು. ಯೋಸೇಫನು ಅವರ ಕೆಟ್ಟತನದ ಸುದ್ದಿಯನ್ನು ತನ್ನ ತಂದೆಗೆ ತಿಳಿಸುತ್ತಿದ್ದನು.</verse>
				<verse number="3">ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನ ವಯಸ್ಸಿನಲ್ಲಿ ಹುಟ್ಟಿದ ಮಗನಾಗಿದ್ದುದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ, ಅವನಿಗೆ ಅನೇಕ ಬಣ್ಣಗಳ ಅಂಗಿಯನ್ನು ಹೊಲಿಸಿಕೊಟ್ಟನು.</verse>
				<verse number="4">ತಮ್ಮ ತಂದೆಯು ಅವನನ್ನು ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿಮಾಡುತ್ತಿರುವುದನ್ನು ಅವನ ಸಹೋದರರು ಕಂಡು, ಅವನನ್ನು ದ್ವೇಷಿಸಿ, ಅವನ ಸಂಗಡ ಸಮಾಧಾನದಿಂದ ಮಾತಾಡದೆಹೋದರು.</verse>
				<verse number="5">ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ, ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.</verse>
				<verse number="6">ಅವನು ಅವರಿಗೆ, “ನಾನು ಕಂಡ ಈ ಕನಸನ್ನು ಹೇಳುತ್ತೇನೆ ಕೇಳಿರಿ.</verse>
				<verse number="7">ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ನನ್ನ ಸಿವುಡು ಎದ್ದುನಿಂತಿತು. ಆಗ ನಿಮ್ಮ ಸಿವುಡುಗಳು ತಿರುಗಿ ನನ್ನ ಸಿವುಡಿಗೆ ಅಡ್ಡಬಿದ್ದವು,” ಎಂದನು.</verse>
				<verse number="8">ಆಗ ಅವನ ಸಹೋದರರು ಅವನಿಗೆ, “ನೀನು ನಮ್ಮನ್ನು ನಿಶ್ಚಯವಾಗಿಯೂ ಆಳುವೆಯೋ? ನಿಜವಾಗಿ ನಮ್ಮ ಮೇಲೆ ದೊರೆತನ ಮಾಡುವಿಯೋ?” ಎಂದು ಹೇಳಿ, ಅವನ ಕನಸು ಮತ್ತು ಅವನ ಮಾತುಗಳಿಗೆ ಅವನನ್ನು ಮತ್ತಷ್ಟೂ ದ್ವೇಷಿಸಿದರು.</verse>
				<verse number="9">ಇದಲ್ಲದೆ ಅವನು ಇನ್ನೊಂದು ಕನಸನ್ನು ಕಂಡು ತನ್ನ ಸಹೋದರರಿಗೆ, “ಇನ್ನೊಂದು ಕನಸನ್ನು ಕಂಡಿದ್ದೇನೆ. ಸೂರ್ಯನೂ ಚಂದ್ರನೂ ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡಬಿದ್ದವು,” ಎಂದನು.</verse>
				<verse number="10">ಅವನು ತನ್ನ ತಂದೆಗೂ ತನ್ನ ಸಹೋದರರಿಗೂ ತಿಳಿಸಿದಾಗ, ಅವನ ತಂದೆಯು ಅವನನ್ನು ಗದರಿಸಿ, “ನೀನು ಕಂಡ ಈ ಕನಸು ಏನು? ನಾನು, ನಿನ್ನ ತಾಯಿ, ನಿನ್ನ ಸಹೋದರರೂ ನಿಜವಾಗಿ ನಿನ್ನ ಮುಂದೆ ಅಡ್ಡ ಬೀಳುವುದಕ್ಕೆ ಬರಬೇಕೋ?” ಎಂದನು.</verse>
				<verse number="11">ಹೀಗೆ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.</verse>
				<verse number="12">ಅವನ ಸಹೋದರರು ಶೆಕೆಮಿನಲ್ಲಿ ತಮ್ಮ ತಂದೆಯ ಮಂದೆಯನ್ನು ಮೇಯಿಸುವುದಕ್ಕೆ ಹೋದರು.</verse>
				<verse number="13">ಆದ್ದರಿಂದ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಸಹೋದರರು ಶೆಕೆಮಿನಲ್ಲಿ ಮಂದೆಯನ್ನು ಮೇಯಿಸುತ್ತಾರಲ್ಲಾ. ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಹೋಗು,” ಎಂದನು. ಅದಕ್ಕೆ ಅವನು, “ಆಗಲಿ ಹೋಗುತ್ತೇನೆ,” ಎಂದನು.</verse>
				<verse number="14">ಯಾಕೋಬನು ಅವನಿಗೆ, “ಹೋಗಿ ನಿನ್ನ ಸಹೋದರರ ಕ್ಷೇಮಸಮಾಚಾರವನ್ನೂ, ಮಂದೆಗಳ ಕ್ಷೇಮಸಮಾಚಾರವನ್ನೂ ತಿಳಿದುಕೊಂಡು ಬಂದು ನನಗೆ ತಿಳಿಸು,” ಎಂದು ಹೇಳಿ ಹೆಬ್ರೋನ್ ಕಣಿವೆಯಿಂದ ಕಳುಹಿಸಿದನು. ಯೋಸೇಫನು ಶೆಕೆಮಿಗೆ ಬಂದಾಗ,</verse>
				<verse number="15">ಒಬ್ಬಾನೊಬ್ಬ ಮನುಷ್ಯನು ಯೋಸೇಫನು ಹೊಲದಲ್ಲಿ ಅಲೆದಾಡುವುದನ್ನು ಕಂಡು ಅವನಿಗೆ, “ನೀನು ಏನು ಹುಡುಕುತ್ತಿದ್ದೀ?” ಎಂದು ಕೇಳಿದನು.</verse>
				<verse number="16">ಅದಕ್ಕೆ ಅವನು, “ನನ್ನ ಸಹೋದರರನ್ನು ಹುಡುಕುತ್ತಿದ್ದೇನೆ, ಅವರು ತಮ್ಮ ಮಂದೆಗಳನ್ನು ಎಲ್ಲಿ ಮೇಯಿಸುತ್ತಿದ್ದಾರೆಂದು ದಯವಿಟ್ಟು ನನಗೆ ಹೇಳು,” ಎಂದನು.</verse>
				<verse number="17">ಆ ಮನುಷ್ಯನು, “ಅವರು ಇಲ್ಲಿಂದ ಹೊರಟು ಹೋದರು. ಅವರು, ‘ನಾವು ದೋತಾನಿಗೆ ಹೋಗೋಣ,’ ಎಂದು ಮಾತಾಡುವದನ್ನು ನಾನು ಕೇಳಿಸಿಕೊಂಡೆ,” ಎಂದನು. ಆಗ ಯೋಸೇಫನು ತನ್ನ ಸಹೋದರರನ್ನು ಹುಡುಕಿಕೊಂಡು ಹೋಗಿ ದೋತಾನಿನಲ್ಲಿ ಅವರನ್ನು ಕಂಡುಕೊಂಡನು.</verse>
				<verse number="18">ಅವರು ದೂರದಿಂದ ಅವನನ್ನು ನೋಡಿದಾಗ, ಅವನು ಸಮೀಪಕ್ಕೆ ಬರುವ ಮುಂಚೆಯೇ ಅವನನ್ನು ಕೊಂದುಹಾಕಬೇಕೆಂದು ಅವನಿಗೆ ವಿರೋಧವಾಗಿ ಒಳಸಂಚು ಮಾಡಿಕೊಂಡರು.</verse>
				<verse number="19">ಅವರು, “ಇಗೋ, ಈ ಕನಸುಗಾರ ಬರುತ್ತಿದ್ದಾನೆ,</verse>
				<verse number="20">ಬನ್ನಿರಿ, ಈಗ ಅವನನ್ನು ಕೊಂದು, ಯಾವುದೋ ಒಂದು ಕಾಡುಮೃಗವು ಅವನನ್ನು ತಿಂದುಬಿಟ್ಟಿತೆಂದು ಹೇಳೋಣ. ತರುವಾಯ ಅವನ ಕನಸುಗಳು ಏನಾಗುವವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.</verse>
				<verse number="21">ಆದರೆ ರೂಬೇನನು ಅದನ್ನು ಕೇಳಿ, ಅವನನ್ನು ಅವರ ಕೈಗಳಿಂದ ತಪ್ಪಿಸಿ, “ಅವನನ್ನು ಕೊಲ್ಲುವುದು ಬೇಡ,” ಎಂದನು.</verse>
				<verse number="22">ರೂಬೇನನು ಅವನನ್ನು ಅವರ ಕೈಗಳಿಂದ ತಪ್ಪಿಸಿ, ತನ್ನ ತಂದೆಯ ಬಳಿಗೆ ತಿರುಗಿ ಕರೆದುಕೊಂಡುಹೋಗುವ ಉದ್ದೇಶದಿಂದ ಅವರಿಗೆ, “ರಕ್ತ ಚೆಲ್ಲಬೇಡಿರಿ, ಕಾಡಿನಲ್ಲಿರುವ ಈ ಗುಂಡಿಯಲ್ಲಿ ಹಾಕಿರಿ, ಆದರೆ ಅವನ ಮೇಲೆ ಕೈಹಾಕಬೇಡಿರಿ,” ಎಂದನು.</verse>
				<verse number="23">ಯೋಸೇಫನು ತನ್ನ ಸಹೋದರರ ಬಳಿಗೆ ಬಂದಾಗ, ಅವರು ಯೋಸೇಫನ ಮೇಲಿದ್ದ ಬಣ್ಣಗಳ ಅಂಗಿಯನ್ನು ತೆಗೆದರು.</verse>
				<verse number="24">ಅವನನ್ನು ತೆಗೆದುಕೊಂಡು ಗುಂಡಿಯಲ್ಲಿ ಹಾಕಿದರು. ಆ ಗುಂಡಿ ನೀರಿಲ್ಲದೆ ಬರಿದಾಗಿತ್ತು.</verse>
				<verse number="25">ಅವರು ಊಟಕ್ಕೆ ಕುಳಿತುಕೊಂಡಾಗ, ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಗಿಲ್ಯಾದಿನಿಂದ ಬರುತ್ತಿತ್ತು. ಅವರ ಒಂಟೆಗಳು ಸಾಂಬ್ರಾಣಿ, ಸುಗಂಧ ತೈಲ, ರಕ್ತಬೋಳಗಳನ್ನು ಹೊರುತ್ತಿದ್ದವು. ಅವರು ಅವುಗಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋಗುತ್ತಿದ್ದರು.</verse>
				<verse number="26">ಆಗ ಯೆಹೂದನು ತನ್ನ ಸಹೋದರರಿಗೆ, “ನಾವು ನಮ್ಮ ಸಹೋದರನನ್ನು ಕೊಂದುಹಾಕಿ, ಅವನ ರಕ್ತವನ್ನು ಮರೆಮಾಡುವುದರಲ್ಲಿ ಲಾಭವೇನು?</verse>
				<verse number="27">ಬನ್ನಿರಿ, ಇಷ್ಮಾಯೇಲರಿಗೆ ಅವನನ್ನು ಮಾರೋಣ. ನಾವು ಅವನ ಮೇಲೆ ಕೈಹಾಕಬಾರದು. ಏಕೆಂದರೆ ಅವನು ನಮ್ಮ ಸಹೋದರನೂ ನಮ್ಮ ದೇಹವೂ ರಕ್ತವೂ ಆಗಿದ್ದಾನೆ,” ಎಂದನು. ಅದಕ್ಕೆ ಅವನ ಸಹೋದರರು ಒಪ್ಪಿದರು.</verse>
				<verse number="28">ಈ ಪ್ರಕಾರ ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ, ಅವರು ಯೋಸೇಫನನ್ನು ಗುಂಡಿಯಿಂದ ಮೇಲೆತ್ತಿ, ಇಷ್ಮಾಯೇಲರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ಅವರು ಯೋಸೇಫನನ್ನು ಈಜಿಪ್ಟಿಗೆ ಕರೆದುಕೊಂಡು ಹೋದರು.</verse>
				<verse number="29">ರೂಬೇನನು ಗುಂಡಿಯ ಬಳಿಗೆ ತಿರುಗಿ ಬಂದಾಗ, ಯೋಸೇಫನು ಗುಂಡಿಯಲ್ಲಿ ಇಲ್ಲದ್ದರಿಂದ, ತನ್ನ ವಸ್ತ್ರಗಳನ್ನು ಹರಿದುಕೊಂಡನು.</verse>
				<verse number="30">ಅವನು ತನ್ನ ಸಹೋದರರ ಬಳಿಗೆ ತಿರುಗಿ ಹೋಗಿ, “ಬಾಲಕನು ಅಲ್ಲಿ ಇಲ್ಲವಲ್ಲಾ, ನಾನು ಎಲ್ಲಿಗೆ ಹೋಗಲಿ?” ಎಂದನು.</verse>
				<verse number="31">ಆಗ ಅವರು ಯೋಸೇಫನ ಅಂಗಿಯನ್ನು ತೆಗೆದುಕೊಂಡು, ಒಂದು ಹೋತವನ್ನು ಕೊಯ್ದು, ಆ ಅಂಗಿಯನ್ನು ರಕ್ತದಲ್ಲಿ ಅದ್ದಿ,</verse>
				<verse number="32">ಆ ಬಣ್ಣದ ಅಂಗಿಯನ್ನು ಅವರು ತಮ್ಮ ತಂದೆಯ ಬಳಿಗೆ ತಂದು, “ಇದು ನಮಗೆ ಸಿಕ್ಕಿತು, ಇದು ನಿನ್ನ ಮಗನ ಅಂಗಿಯೋ ಏನೋ ನೋಡು,” ಎಂದು ಹೇಳಿದರು.</verse>
				<verse number="33">ಯಾಕೋಬನು ಅದನ್ನು ಗುರುತು ಹಿಡಿದು, “ಇದು ನನ್ನ ಮಗನ ಅಂಗಿ ಹೌದು, ದುಷ್ಟಮೃಗವು ಅವನನ್ನು ತಿಂದುಬಿಟ್ಟಿತು, ಯೋಸೇಫನನ್ನು ನಿಸ್ಸಂದೇಹವಾಗಿ ಸೀಳಿಹಾಕಿರಬೇಕು,” ಎಂದನು.</verse>
				<verse number="34">ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.</verse>
				<verse number="35">ಅವನ ಪುತ್ರಪುತ್ರಿಯರೆಲ್ಲಾ ಅವನನ್ನು ಆದರಿಸಿದರೂ ಅವನು ಆದರಣೆ ಹೊಂದಲೊಲ್ಲದೆ, “ನನ್ನ ಮಗನಿರುವ ಸಮಾಧಿಗೆ ದುಃಖದಿಂದಲೇ ಇಳಿದು ಹೋಗುವೆನು,” ಎಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.</verse>
				<verse number="36">ಇದರೊಂದಿಗೆ, ಆ ಮಿದ್ಯಾನ್ಯರು ಯೋಸೇಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಪೋಟೀಫರನಿಗೆ ಮಾರಿದರು. ಇವನು ಫರೋಹನ ಉದ್ಯೋಗಸ್ಥನೂ ಮೈಗಾವಲಿನ ದಳಪತಿಯೂ ಆಗಿದ್ದನು.</verse>
			</chapter>
			<chapter number="38">
				<verse number="1">ಆ ಕಾಲದಲ್ಲಿ ಯೆಹೂದನು ತನ್ನ ಸಹೋದರರ ಬಳಿಯಿಂದ ಹೊರಟು, ಅದುಲ್ಲಾಮೂರಿನವನಾದ ಹೀರಾನ ಬಳಿಗೆ ಹೋದನು.</verse>
				<verse number="2">ಅಲ್ಲಿ ಯೆಹೂದನು ಕಾನಾನ್ಯನಾದ ಶೂಗನ ಮಗಳನ್ನು ಕಂಡು, ಅವಳನ್ನು ಮದುವೆಯಾಗಿ ಅವಳನ್ನು ಕೂಡಿದನು.</verse>
				<verse number="3">ಅವಳು ಗರ್ಭಿಣಿಯಾಗಿ ಮಗನನ್ನು ಹೆತ್ತಳು. ಯೆಹೂದನು ಅವನಿಗೆ ಏರ್ ಎಂದು ಹೆಸರಿಟ್ಟನು.</verse>
				<verse number="4">ಆಕೆಯು ತಿರುಗಿ ಗರ್ಭಿಣಿಯಾಗಿ ಮಗನನ್ನು ಹೆತ್ತು, ಅವನಿಗೆ ಓನಾನ್ ಎಂದು ಹೆಸರಿಟ್ಟಳು.</verse>
				<verse number="5">ಆಕೆಯು ಮತ್ತೊಂದು ಸಾರಿ ಮಗನನ್ನು ಹೆತ್ತು, ಅವನಿಗೆ ಶೇಲಹ ಎಂದು ಹೆಸರಿಟ್ಟಳು. ಆಕೆಯು ಅವನನ್ನು ಹೆತ್ತಾಗ, ಯೆಹೂದನು ಕೆಜೀಬಿನಲ್ಲಿ ಇದ್ದನು.</verse>
				<verse number="6">ಇದಾದ ಮೇಲೆ ಯೆಹೂದನು ತನ್ನ ಜೇಷ್ಠಪುತ್ರ ಏರನಿಗೆ ತಾಮಾರ್ ಎಂಬ ಹೆಣ್ಣನ್ನು ತಂದು ಮದುವೆಮಾಡಿದನು.</verse>
				<verse number="7">ಆದರೆ ಯೆಹೂದನ ಜೇಷ್ಠಪುತ್ರ ಏರನು ಯೆಹೋವ ದೇವರ ದೃಷ್ಟಿಯಲ್ಲಿ ದುಷ್ಟನಾಗಿದ್ದುದರಿಂದ, ಯೆಹೋವ ದೇವರು ಅವನನ್ನು ಸಾವಿಗೀಡುಮಾಡಿದರು.</verse>
				<verse number="8">ಆಗ ಯೆಹೂದನು ಓನಾನನಿಗೆ, “ನಿನ್ನ ಸಹೋದರನ ಹೆಂಡತಿಯ ಬಳಿಗೆ ಹೋಗಿ, ಅವಳನ್ನು ಮದುವೆಯಾಗಿ, ನಿನ್ನ ಅಣ್ಣನಿಗೆ ಸಂತತಿಯನ್ನು ಉಂಟುಮಾಡು,” ಎಂದನು.</verse>
				<verse number="9">ಆದರೆ ಓನಾನನು ಆ ಸಂತತಿಯು ತನ್ನದಾಗತಕ್ಕದ್ದಲ್ಲವೆಂದು ತಿಳಿದುಕೊಂಡು, ತನ್ನ ಅಣ್ಣನಿಗೆ ಸಂತತಿಯನ್ನು ಉಂಟು ಮಾಡದ ಹಾಗೆ, ತನ್ನ ವೀರ್ಯವನ್ನು ನೆಲದ ಮೇಲೆ ಚೆಲ್ಲಿದನು.</verse>
				<verse number="10">ಅವನು ಮಾಡಿದ್ದು ಯೆಹೋವ ದೇವರ ದೃಷ್ಟಿಯಲ್ಲಿ ಮೆಚ್ಚಿಗೆಯಾಗಿರಲಿಲ್ಲ. ಆದ್ದರಿಂದ ಅವರು ಇವನನ್ನೂ ಸಾವಿಗೀಡುಮಾಡಿದರು.</verse>
				<verse number="11">ಆಗ ಯೆಹೂದನು ತನ್ನ ಸೊಸೆ ತಾಮಾರಳಿಗೆ, “ನನ್ನ ಮಗ ಶೇಲಹನು ದೊಡ್ಡವನಾಗುವವರೆಗೆ ವಿಧವೆಯಾಗಿದ್ದು, ನಿನ್ನ ತಂದೆಯ ಮನೆಯಲ್ಲಿರು,” ಎಂದನು. ಏಕೆಂದರೆ ಇವನು ಸಹ ತನ್ನ ಸಹೋದರರ ಹಾಗೆ ಸತ್ತಾನೆಂದು ಅಂದುಕೊಂಡನು. ತಾಮಾರಳಾದರೋ ಹೋಗಿ ತನ್ನ ತಂದೆಯ ಮನೆಯಲ್ಲಿ ವಾಸಮಾಡಿದಳು.</verse>
				<verse number="12">ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂದನು ಆದರಣೆ ಹೊಂದಿದ ಮೇಲೆ, ತಾನೂ, ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರಾನನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾ ಊರಿಗೆ ಹೋದರು.</verse>
				<verse number="13">ಆಗ ತಾಮಾರಳಿಗೆ, “ನಿನ್ನ ಮಾವನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವುದಕ್ಕೆ ತಿಮ್ನಾ ಊರಿಗೆ ಹೋಗುತ್ತಿದ್ದಾನೆ,” ಎಂದು ತಿಳಿಸಿದಾಗ,</verse>
				<verse number="14">ಆಕೆಯು ವಿಧವೆಯ ವಸ್ತ್ರಗಳನ್ನು ತೆಗೆದಿಟ್ಟು, ಮುಸುಕುಹಾಕಿ ಮುಚ್ಚಿಕೊಂಡು, ತಿಮ್ನಾ ಊರಿನ ಮಾರ್ಗದಲ್ಲಿರುವ ಏನಯಿಮೂರಿನ ಬಹಿರಂಗ ಸ್ಥಳದಲ್ಲಿ ಕೂತುಕೊಂಡಳು. ಏಕೆಂದರೆ ಶೇಲಹನು ದೊಡ್ಡವನಾಗಿದ್ದರೂ ತನ್ನನ್ನು ಅವನಿಗೆ ಹೆಂಡತಿಯಾಗಿ ಕೊಡಲಿಲ್ಲವೆಂದು ಹಾಗೆ ಮಾಡಿದಳು.</verse>
				<verse number="15">ಯೆಹೂದನು ಅವಳನ್ನು ಕಂಡಾಗ, ಅವಳು ಮುಖ ಮುಚ್ಚಿಕೊಂಡಿದ್ದರಿಂದ ಅವಳು ವೇಶ್ಯೆಯೆಂದು ತಿಳಿದುಕೊಂಡನು.</verse>
				<verse number="16">ಮಾರ್ಗದಿಂದ ಆಕೆಯ ಕಡೆಗೆ ತಿರುಗಿಕೊಂಡು ಅವನು, “ನನ್ನನ್ನು ನಿನ್ನ ಬಳಿಗೆ ಬರಗೊಡಿಸು,” ಎಂದನು. ಏಕೆಂದರೆ ಅವಳು ತನ್ನ ಸೊಸೆಯೆಂದು ಅವನಿಗೆ ತಿಳಿದಿರಲಿಲ್ಲ. ಅವಳು, “ನೀನು ನನ್ನ ಬಳಿಗೆ ಬಂದರೆ, ನನಗೆ ಏನು ಕೊಡುವೆ?” ಎಂದಳು.</verse>
				<verse number="17">ಅವನು, “ಮಂದೆಯಿಂದ ನಿನಗೆ ಮೇಕೆಯ ಮರಿಯನ್ನು ಕಳುಹಿಸುತ್ತೇನೆ,” ಎಂದನು. ಅವಳು, “ನೀನು ಅದನ್ನು ಕಳುಹಿಸುವವರೆಗೆ ಈಡು ಕೊಡುವೆಯೋ?” ಎಂದಳು.</verse>
				<verse number="18">ಅದಕ್ಕೆ ಅವನು, “ನಿನಗೆ ಕೊಡತಕ್ಕ ಈಡು ಏನು?” ಎಂದಾಗ. ಅವಳು, “ನಿನ್ನ ಮುದ್ರೆಯೂ ನಿನ್ನ ದಾರವೂ ನಿನ್ನ ಕೈಯಲ್ಲಿರುವ ಕೋಲೂ,” ಎಂದಳು. ಆಗ ಅವನು ಅವುಗಳನ್ನು ಆಕೆಗೆ ಕೊಟ್ಟು, ಆಕೆಯನ್ನು ಕೂಡಿದನು. ಹೀಗೆ ಅವಳು ಅವನಿಂದ ಗರ್ಭಿಣಿಯಾದಳು.</verse>
				<verse number="19">ತರುವಾಯ ಅವಳು ಎದ್ದು ಹೋಗಿ, ಮುಸುಕನ್ನು ತೆಗೆದಿಟ್ಟು, ತನ್ನ ವಿಧವೆಯ ವಸ್ತ್ರಗಳನ್ನು ಹಾಕಿಕೊಂಡಳು.</verse>
				<verse number="20">ಯೆಹೂದನು ಆ ಸ್ತ್ರೀಯ ಕೈಯಿಂದ ಈಡು ತೆಗೆದುಕೊಳ್ಳುವದಕ್ಕೆ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಿಂದ ಮೇಕೆಯ ಮರಿಯನ್ನು ಕಳುಹಿಸಿದಾಗ ಆಕೆಯು ಸಿಗಲಿಲ್ಲ.</verse>
				<verse number="21">ಅದುಲ್ಲಾಮ್ಯನು ಆಕೆಯ ಊರಿನವರನ್ನು, “ಏನಯಿಮಿನ ಬಹಿರಂಗ ಮಾರ್ಗದ ಬಳಿಯಲ್ಲಿದ್ದ ವೇಶ್ಯೆ ಎಲ್ಲಿ?” ಎಂದು ಕೇಳಿದಾಗ. ಅವರು, “ಈ ಸ್ಥಳದಲ್ಲಿ ಯಾವ ವೇಶ್ಯೆಯೂ ಇರಲಿಲ್ಲ,” ಎಂದರು.</verse>
				<verse number="22">ಆಗ ಅವನು ಯೆಹೂದನ ಬಳಿಗೆ ತಿರುಗಿಬಂದು, “ಆಕೆಯು ನನಗೆ ಸಿಕ್ಕಲಿಲ್ಲ, ಇದಲ್ಲದೆ ಆ ಸ್ಥಳದ ಮನುಷ್ಯರು, ‘ಈ ಸ್ಥಳದಲ್ಲಿ ದೇವದಾಸಿ ಇರಲಿಲ್ಲ,’ ಎಂದು ಹೇಳಿದರು,” ಎಂದು ಹೇಳಿದನು.</verse>
				<verse number="23">ಆಗ ಯೆಹೂದನು, “ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ಅವಳು ಅದನ್ನು ತೆಗೆದುಕೊಂಡು ಹೋಗಲಿ, ಈ ಮೇಕೆಯ ಮರಿಯನ್ನು ನಾನು ಕಳುಹಿಸಿದೆನು, ಆದರೆ ಆಕೆಯು ನಿನಗೆ ಸಿಕ್ಕಲಿಲ್ಲ,” ಎಂದನು.</verse>
				<verse number="24">ಹೆಚ್ಚು ಕಡಿಮೆ ಮೂರು ತಿಂಗಳಾದ ಮೇಲೆ ಯೆಹೂದನಿಗೆ, “ನಿನ್ನ ಸೊಸೆ ತಾಮಾರಳು ವೇಶ್ಯಾವೃತ್ತಿಮಾಡಿ ವ್ಯಭಿಚಾರದಿಂದ ಗರ್ಭಿಣಿಯಾಗಿದ್ದಾಳೆ,” ಎಂದು ತಿಳಿಸಿದರು. ಆಗ ಯೆಹೂದನು, “ಅವಳನ್ನು ಹೊರಗೆ ತನ್ನಿರಿ, ಅವಳನ್ನು ಸುಡಬೇಕು,” ಎಂದನು.</verse>
				<verse number="25">ಆಕೆಯನ್ನು ಹೊರಗೆ ತಂದಾಗ, ಆಕೆಯು ತನ್ನ ಮಾವನಿಗೆ, “ಈ ಒತ್ತೆಯ ಸಾಮಾನುಗಳನ್ನು ಕೊಟ್ಟ ಆ ಮನುಷ್ಯನಿಂದಲೇ ನಾನು ಗರ್ಭಿಣಿಯಾಗಿದ್ದೇನೆ. ಆದ್ದರಿಂದ ಈ ಮುದ್ರೆಯೂ ದಾರವೂ ಕೋಲೂ ಯಾರವೆಂದು ತಿಳಿದುಕೋ,” ಎಂದು ಹೇಳಿದಳು.</verse>
				<verse number="26">ಆಗ ಯೆಹೂದನು ಅವುಗಳನ್ನು ಗುರುತಿಸಿ, “ಆಕೆಯು ನನಗಿಂತ ನೀತಿವಂತಳು, ಏಕೆಂದರೆ ನಾನು ನನ್ನ ಮಗ ಶೇಲಹನಿಗೆ ಅವಳನ್ನು ಕೊಡಲಿಲ್ಲ,” ಎಂದನು. ಅವನು ಮತ್ತೆ ಆಕೆಯೊಡನೆ ಸಂಸರ್ಗವಿಲ್ಲದೆ ಇದ್ದನು.</verse>
				<verse number="27">ಅವಳು ಹೆರುವ ಸಮಯದಲ್ಲಿ, ಅವಳಿ ಮಕ್ಕಳು ಆಕೆಯ ಗರ್ಭದಲ್ಲಿದ್ದವು.</verse>
				<verse number="28">ಆಕೆಯು ಹೆರುವಾಗ ಒಂದು ಮಗುವು ತನ್ನ ಕೈಚಾಚಿತು. ಆಗ ಸೂಲಗಿತ್ತಿಯು, “ಇದು ಮೊದಲು ಬಂದದ್ದು,” ಎಂದು ಹೇಳಿ ಅದರ ಕೈಗೆ ಕೆಂಪು ನೂಲನ್ನು ಕಟ್ಟಿದಳು.</verse>
				<verse number="29">ಆ ಮಗುವು ತನ್ನ ಕೈಯನ್ನು ಹಿಂದಕ್ಕೆ ಎಳೆದಾಗ, ಅವನ ಸಹೋದರನು ಹೊರಗೆ ಬಂದನು. ಆಗ ಅವಳು, “ನೀನು ಕಿತ್ತುಕೊಂಡು ಹೊರಗೆ ಬಂದೆಯಾ?” ಎಂದಳು. ಹೀಗೆ ಅವನಿಗೆ ಪೆರೆಚ್ ಎಂದು ಹೆಸರಾಯಿತು.</verse>
				<verse number="30">ತರುವಾಯ ತನ್ನ ಕೈಯಲ್ಲಿ ಕೆಂಪು ನೂಲು ಇದ್ದ ಅವನ ಸಹೋದರನು ಹೊರಗೆ ಬಂದನು. ಅವನಿಗೆ ಜೆರಹ ಎಂದು ಹೆಸರಾಯಿತು.</verse>
			</chapter>
			<chapter number="39">
				<verse number="1">ಯೋಸೇಫನನ್ನು ಕರೆದುಕೊಂಡುಹೋದ ಇಷ್ಮಾಯೇಲರು ಈಜಿಪ್ಟಿಗೆ ಸೇರಿದಾಗ ಅವನನ್ನು ಈಜಿಪ್ಟಿನ ಪೋಟೀಫರ್ ಎಂಬವನಿಗೆ ಮಾರಿಬಿಟ್ಟರು. ಪೋಟೀಫರನು ಫರೋಹನ ಉದ್ಯೋಗಸ್ಥನೂ ಮೈಗಾವಲಿನ ದಳಪತಿಯೂ ಆಗಿದ್ದನು.</verse>
				<verse number="2">ಯೆಹೋವ ದೇವರು ಯೋಸೇಫನ ಸಂಗಡ ಇದ್ದುದರಿಂದ, ಅವನು ಏಳಿಗೆಯಾಗಿ ಈಜಿಪ್ಟಿನವನಾದ ತನ್ನ ಯಜಮಾನನ ಮನೆಯಲ್ಲಿ ಇದ್ದನು.</verse>
				<verse number="3">ಯೆಹೋವ ದೇವರು ಅವನ ಸಂಗಡ ಇದ್ದಾನೆಂದೂ ಅವನು ಮಾಡಿದ್ದನ್ನೆಲ್ಲಾ ಯೆಹೋವ ದೇವರು ಅವನ ಕೈಯಿಂದ ಅಭಿವೃದ್ಧಿಮಾಡಿದನೆಂದೂ ಅವನ ಯಜಮಾನನಿಗೆ ತಿಳಿಯಿತು.</verse>
				<verse number="4">ಆದ್ದರಿಂದ ಯೋಸೇಫನು ಪೋಟೀಫರನ ದೃಷ್ಟಿಯಲ್ಲಿ ದಯೆಹೊಂದಿ ಅವನ ಸೇವೆ ಮಾಡಿದನು. ಪೋಟೀಫರನು ಅವನನ್ನು ತನ್ನ ಮನೆಯ ಮೇಲೆ ಮೇಲ್ವಿಚಾರಕನನ್ನಾಗಿ ಮಾಡಿ, ತನಗಿದ್ದದ್ದನ್ನೆಲ್ಲಾ ಅವನ ಕೈಗೆ ಒಪ್ಪಿಸಿದನು.</verse>
				<verse number="5">ಅವನನ್ನು ಮನೆಯಲ್ಲಿಯೂ, ತನಗಿದ್ದ ಎಲ್ಲದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಯೆಹೋವ ದೇವರು ಆ ಈಜಿಪ್ಟಿನವನ ಮನೆಯನ್ನು ಯೋಸೇಫನಿಗಾಗಿ ಆಶೀರ್ವದಿಸಿದರು. ಮನೆಯಲ್ಲಿಯೂ ಹೊಲದಲ್ಲಿಯೂ ಅವನಿಗಿದ್ದ ಎಲ್ಲದರ ಮೇಲೆಯೂ ಯೆಹೋವ ದೇವರ ಆಶೀರ್ವಾದವಿತ್ತು.</verse>
				<verse number="6">ಹೀಗಿರುವುದರಿಂದ ಅವನು ತನಗಿದ್ದದ್ದನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿ, ತನ್ನ ಊಟದ ವಿಷಯದಲ್ಲಿ ಹೊರತು ಬೇರೆ ಯಾವುದರ ವಿಷಯದಲ್ಲಿಯೂ ಚಿಂತಿಸದೆ ಇದ್ದನು. ಯೋಸೇಫನು ಸುರೂಪಿಯೂ ಸುಂದರನೂ ಆಗಿದ್ದನು.</verse>
				<verse number="7">ಸ್ವಲ್ಪ ಸಮಯದ ನಂತರ ಯೋಸೇಫನ ಯಜಮಾನನ ಹೆಂಡತಿಯು ಅವನ ಮೇಲೆ ಕಣ್ಣು ಹಾಕಿ, “ನನ್ನ ಸಂಗಡ ಮಲಗು,” ಎಂದಳು.</verse>
				<verse number="8">ಆದರೆ ಅವನು ಅದಕ್ಕೆ ಒಪ್ಪದೆ, ತನ್ನ ಯಜಮಾನನ ಹೆಂಡತಿಗೆ, “ನನ್ನ ಯಜಮಾನನು ತನ್ನ ಮನೆಯಲ್ಲಿರುವ ಯಾವುದರ ಬಗ್ಗೆಯೂ ಚಿಂತಿಸದೆ, ತನಗಿದ್ದದ್ದನ್ನೆಲ್ಲಾ ನನಗೆ ಒಪ್ಪಿಸಿದ್ದಾನೆ.</verse>
				<verse number="9">ಈ ಮನೆಯಲ್ಲಿ ನನಗಿಂತ ದೊಡ್ಡವನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವುದರಿಂದ, ನಿನ್ನನ್ನು ಹೊರತುಪಡಿಸಿ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ಮಹಾ ದುಷ್ಕೃತ್ಯ ಮಾಡಿ, ದೇವರಿಗೆ ವಿರೋಧವಾಗಿ ಪಾಪ ಮಾಡುವುದು ಹೇಗೆ?” ಎಂದನು.</verse>
				<verse number="10">ಅವಳು ಪ್ರತಿದಿನ ಯೋಸೇಫನ ಸಂಗಡ ಮಾತನಾಡಿದರೂ, ಅವನು ಅವಳ ಕೂಡ ಮಲಗುವುದಕ್ಕಾಗಲಿ, ಅವಳ ಹತ್ತಿರ ಇರುವುದಕ್ಕಾಗಲಿ ಒಪ್ಪಲಿಲ್ಲ.</verse>
				<verse number="11">ಹೀಗಿರುವಲ್ಲಿ ಒಂದು ದಿನ ಅವನು ತನ್ನ ಕೆಲಸ ಮಾಡುವುದಕ್ಕೆ ಮನೆಯನ್ನು ಪ್ರವೇಶಿಸಿದಾಗ, ಮನೆಯ ಸೇವಕರಲ್ಲಿ ಒಬ್ಬರೂ ಇರಲಿಲ್ಲ.</verse>
				<verse number="12">ಆಗ ಆಕೆಯು ಅವನ ಬಟ್ಟೆಯನ್ನು ಹಿಡಿದುಕೊಂಡು, “ನನ್ನ ಸಂಗಡ ಮಲಗು,” ಎಂದಳು. ಆದರೆ ಅವನು ತನ್ನ ವಸ್ತ್ರವನ್ನು ಅವಳ ಕೈಯಲ್ಲಿ ಬಿಟ್ಟು ಹೊರಗೆ ಓಡಿಹೋದನು.</verse>
				<verse number="13">ಅವನು ತನ್ನ ವಸ್ತ್ರವನ್ನು ತನ್ನ ಕೈಯಲ್ಲಿ ಬಿಟ್ಟು ಬಿಟ್ಟಿದ್ದನ್ನೂ, ಹೊರಗೆ ಓಡಿ ಹೋದದ್ದನ್ನೂ ಅವಳು ಕಂಡು,</verse>
				<verse number="14">ತನ್ನ ಮನೆಯ ಸೇವಕರನ್ನು ಕರೆದು ಅವರಿಗೆ, “ನೋಡಿರಿ, ನಮ್ಮನ್ನು ಅವಮಾನ ಮಾಡುವುದಕ್ಕೆ ಈ ಹಿಬ್ರಿಯನು ನಮ್ಮಲ್ಲಿಗೆ ಬಂದಿದ್ದಾನೆ. ಅವನು ನನ್ನ ಮೇಲೆ ಅತ್ಯಾಚಾರಮಾಡುವುದಕ್ಕೆ ನನ್ನ ಹತ್ತಿರ ಬಂದನು. ಆಗ ನಾನು ಗಟ್ಟಿಯಾಗಿ ಕೂಗಿದೆನು.</verse>
				<verse number="15">ನಾನು ಜೋರಾಗಿ ಕೂಗಿದ್ದನ್ನು ಅವನು ಕೇಳಿ, ತನ್ನ ವಸ್ತ್ರವನ್ನು ನನ್ನ ಬಳಿಯಲ್ಲೇ ಬಿಟ್ಟು ಹೊರಗೆ ಓಡಿಹೋದನು,” ಎಂದಳು.</verse>
				<verse number="16">ತನ್ನ ಯಜಮಾನನು ಹೊರಗಿನಿಂದ ಬರುವವರೆಗೆ, ಆಕೆಯು ಅವನ ವಸ್ತ್ರವನ್ನು ತನ್ನ ಬಳಿಯಲ್ಲಿಯೇ ಇಟ್ಟುಕೊಂಡಳು.</verse>
				<verse number="17">ಅವನು ಬಂದಾಗ ಅವನಿಗೂ ಅದರಂತೆಯೇ ಹೇಳುತ್ತಾ, “ನೀನು ನಮ್ಮ ಬಳಿಗೆ ತಂದ ಹಿಬ್ರಿಯ ಸೇವಕನು ನನ್ನನ್ನು ಅವಮಾನ ಮಾಡುವುದಕ್ಕೆ ನನ್ನ ಬಳಿಗೆ ಬಂದನು.</verse>
				<verse number="18">ಆದರೆ ನಾನು ಜೋರಾಗಿ ಕೂಗಿಕೊಂಡಾಗ, ಅವನು ತನ್ನ ವಸ್ತ್ರವನ್ನು ನನ್ನ ಬಳಿಯಲ್ಲಿ ಬಿಟ್ಟು ಹೊರಗೆ ಓಡಿಹೋದನು,” ಎಂದಳು.</verse>
				<verse number="19">“ನಿನ್ನ ಸೇವಕನು ನನಗೆ ಹೀಗೆ ಮಾಡಿದ,” ಎಂದು ತನ್ನ ಹೆಂಡತಿ ಹೇಳಿದ್ದನ್ನು ಯಜಮಾನನು ಕೇಳಿ, ಅವನ ಕೋಪವೇರಿತು.</verse>
				<verse number="20">ಆಗ ಯೋಸೇಫನ ಯಜಮಾನನು ಅವನನ್ನು ಹಿಡಿದುಕೊಂಡು, ರಾಜನ ಕೈದಿಗಳನ್ನಿಡುವ ಸೆರೆಮನೆಯಲ್ಲಿ ಹಾಕಿದನು. ಯೋಸೇಫನು ಆ ಸೆರೆಮನೆಯಲ್ಲಿದ್ದನು.</verse>
				<verse number="21">ಆದರೆ ಯೆಹೋವ ದೇವರು ಯೋಸೇಫನ ಸಂಗಡ ಇದ್ದು, ಅವನ ಮೇಲೆ ಕರುಣೆಯಿಟ್ಟು, ಸೆರೆಮನೆಯ ಯಜಮಾನನು ಅವನ ಮೇಲೆ ದಯೆ ತೋರಿಸುವಂತೆ ಮಾಡಿದರು.</verse>
				<verse number="22">ಆದ್ದರಿಂದ ಸೆರೆಯ ಯಜಮಾನನು ಸೆರೆಮನೆಯಲ್ಲಿ ಬಂಧಿಸಿದ ಕೈದಿಗಳನ್ನೆಲ್ಲಾ ಯೋಸೇಫನಿಗೆ ಒಪ್ಪಿಸಿದನು. ಅಲ್ಲಿ ಮಾಡಬೇಕಾದದ್ದನ್ನೆಲ್ಲಾ ಯೋಸೇಫನೇ ಮಾಡಿಸಿದನು.</verse>
				<verse number="23">ಯೆಹೋವ ದೇವರು ಅವನ ಸಂಗಡ ಇದ್ದುದರಿಂದಲೂ ಅವನು ಮಾಡುವುದನ್ನು ಯೆಹೋವ ದೇವರು ಅಭಿವೃದ್ಧಿಮಾಡಿದ್ದರಿಂದಲೂ ಸೆರೆಯ ಯಜಮಾನನು ಅವನ ಕೈಗೆ ಒಪ್ಪಿಸಿದ ಯಾವುದಕ್ಕೂ ಚಿಂತೆ ಮಾಡದೆ ಇದ್ದನು.</verse>
			</chapter>
			<chapter number="40">
				<verse number="1">ಕೆಲವು ಸಮಯದ ನಂತರ ಈಜಿಪ್ಟಿನ ಅರಸನ ಪಾನದಾಯಕನೂ, ರೊಟ್ಟಿಗಾರನೂ ತಮ್ಮ ಅರಸನಿಗೆ ಎದುರಾಗಿ ಅಪರಾಧ ಮಾಡಿದರು.</verse>
				<verse number="2">ಆಗ ಫರೋಹನು ಪಾನದಾಯಕರಲ್ಲಿ ಮುಖ್ಯಸ್ಥನೂ, ರೊಟ್ಟಿಗಾರರಲ್ಲಿ ಮುಖ್ಯಸ್ಥನೂ ಆಗಿದ್ದ ಅವನ ಇಬ್ಬರು ಉದ್ಯೋಗಸ್ಥರ ಮೇಲೆ ಕೋಪಿಸಿಕೊಂಡು,</verse>
				<verse number="3">ಅವರನ್ನು ಮೈಗಾವಲಿನವರ ದಳಪತಿಯ ಮನೆಯೊಳಗೆ ಕಾವಲಿರಿಸಿದನು. ಅದು ಯೋಸೇಫನು ಬಂಧಿಯಾಗಿದ್ದ ಸ್ಥಳವಾಗಿತ್ತು.</verse>
				<verse number="4">ಮೈಗಾವಲಿನ ದಳಪತಿಯು ಅವರನ್ನೂ ನೋಡಿಕೊಳ್ಳುವದಕ್ಕೆ ಯೋಸೇಫನನ್ನು ನೇಮಿಸಿದ್ದರಿಂದ, ಅವನು ಅವರನ್ನು ನೋಡಿಕೊಳ್ಳುತ್ತಿದ್ದನು. ಅವರು ಕೆಲವು ಕಾಲ ಸೆರೆಯಲ್ಲಿದ್ದರು.</verse>
				<verse number="5">ಅವರಿಬ್ಬರಿಗೂ ಅಂದರೆ, ಈಜಿಪ್ಟ್ ದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ರೊಟ್ಟಿಗಾರನಿಗೂ ಒಂದೇ ರಾತ್ರಿ ಕನಸು ಬಿತ್ತು. ಅವರವರ ಕನಸಿಗೆ ಅದರದೇ ಆದ ಅರ್ಥವಿತ್ತು.</verse>
				<verse number="6">ಆಗ ಯೋಸೇಫನು ಬೆಳಿಗ್ಗೆ ಅವರ ಬಳಿಗೆ ಬಂದು ಅವರನ್ನು ನೋಡಿದಾಗ, ಅವರು ಚಿಂತೆಯುಳ್ಳವರಾಗಿದ್ದರು.</verse>
				<verse number="7">ಅವನು ತನ್ನ ಸಂಗಡ ತನ್ನ ಯಜಮಾನನ ಸೆರೆಯಲ್ಲಿದ್ದ ಫರೋಹನ ಅಧಿಕಾರಿಗಳನ್ನು, “ನಿಮ್ಮ ಮುಖಗಳು ಇಂದು ಚಿಂತೆಗೊಂಡಿರುವುದು ಏಕೆ?” ಎಂದು ಕೇಳಿದನು.</verse>
				<verse number="8">ಅವರು ಯೋಸೇಫನಿಗೆ, “ನಾವು ಕನಸನ್ನು ಕಂಡಿದ್ದೇವೆ, ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ,” ಎಂದರು. ಯೋಸೇಫನು ಅವರಿಗೆ, “ಅರ್ಥ ಹೇಳುವುದು ದೇವರದಲ್ಲವೋ? ಎಂದು ಹೇಳಿ, ಅವುಗಳನ್ನು ನನಗೆ ಹೇಳಿರಿ,” ಎಂದನು.</verse>
				<verse number="9">ಆಗ ಮುಖ್ಯ ಪಾನದಾಯಕನು ತನ್ನ ಕನಸನ್ನು ಯೋಸೇಫನಿಗೆ ತಿಳಿಸುತ್ತಾ, “ಕನಸಿನಲ್ಲಿ ನನ್ನ ಮುಂದೆ ದ್ರಾಕ್ಷಿಬಳ್ಳಿ ಇತ್ತು.</verse>
				<verse number="10">ಆ ದ್ರಾಕ್ಷಿಬಳ್ಳಿಯಲ್ಲಿ ಮೂರು ಕೊಂಬೆಗಳಿದ್ದವು. ಅವು ಚಿಗುರಿ, ಹೂವು ಅರಳಿ, ಅದರ ಗೊಂಚಲುಗಳು ಹಣ್ಣಾದವು.</verse>
				<verse number="11">ಫರೋಹನ ಪಾತ್ರೆಯು ನನ್ನ ಕೈಯಲ್ಲಿರಲಾಗಿ, ನಾನು ಆ ದ್ರಾಕ್ಷಿಹಣ್ಣುಗಳನ್ನು ತೆಗೆದು ಫರೋಹನ ಪಾತ್ರೆಯಲ್ಲಿ ಹಿಂಡಿ, ಆ ಪಾತ್ರೆಯನ್ನು ಫರೋಹನ ಕೈಯಲ್ಲಿ ಕೊಟ್ಟೆನು,” ಎಂದನು.</verse>
				<verse number="12">ಅದಕ್ಕೆ ಯೋಸೇಫನು, “ಅದರ ಅರ್ಥ ಏನೆಂದರೆ, ಆ ಮೂರು ಕೊಂಬೆಗಳು ಮೂರು ದಿನಗಳಾಗಿವೆ.</verse>
				<verse number="13">ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಗೌರವಿಸಿ, ತಿರುಗಿ ನಿನ್ನ ಕೆಲಸದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವೆ.</verse>
				<verse number="14">ಆದರೆ ನೀನು ಸುಖದಿಂದಿರುವಾಗ ನನ್ನನ್ನು ನೆನಪಿಸಿಕೊಂಡು, ನನಗೆ ದಯೆತೋರಿಸಿ, ಫರೋಹನ ಮುಂದೆ ನನ್ನ ವಿಷಯ ತಿಳಿಸಿ, ಈ ಸೆರೆಯೊಳಗಿಂದ ನನ್ನನ್ನು ಹೊರಗೆ ಬರುವಂತೆ ಮಾಡಬೇಕು.</verse>
				<verse number="15">ಏಕೆಂದರೆ ನನ್ನನ್ನು ಹಿಬ್ರಿಯರ ದೇಶದೊಳಗಿಂದ ಹಿಡಿದು ತಂದಿದ್ದಾರೆ. ಇಲ್ಲಿಯೂ ಸಹ ನಾನು ಏನೂ ತಪ್ಪುಮಾಡದೆ ಇದ್ದರೂ ನನ್ನನ್ನು ಸೆರೆಯಲ್ಲಿ ಹಾಕಿದರು,” ಎಂದನು.</verse>
				<verse number="16">ಯೋಸೇಫನು ಒಳ್ಳೆಯ ಅರ್ಥವನ್ನು ಹೇಳಿದನೆಂದು ಮುಖ್ಯ ರೊಟ್ಟಿಗಾರನು ತಿಳಿದಾಗ, ಅವನು ಯೋಸೇಫನಿಗೆ, “ನನ್ನ ಕನಸಿನಲ್ಲಿಯೂ ಮೂರು ರೊಟ್ಟಿಯ ಪುಟ್ಟಿಗಳು ನನ್ನ ತಲೆಯ ಮೇಲಿದ್ದವು.</verse>
				<verse number="17">ಮೇಲಿದ್ದ ಪುಟ್ಟಿಯಲ್ಲಿ ಫರೋಹನಿಗೋಸ್ಕರ ರೊಟ್ಟಿಗಾರರು ಮಾಡುವ ಎಲ್ಲಾ ವಿಧವಾದ ಆಹಾರವಿತ್ತು. ನನ್ನ ತಲೆಯ ಮೇಲಿದ್ದ ಪುಟ್ಟಿಯೊಳಗಿದ್ದ ಅದನ್ನು ಪಕ್ಷಿಗಳು ತಿಂದವು,” ಎಂದನು.</verse>
				<verse number="18">ಅದಕ್ಕೆ ಯೋಸೇಫನು ಉತ್ತರವಾಗಿ, “ಅದರ ಅರ್ಥವು ಇದೇ: ಆ ಮೂರು ಪುಟ್ಟಿಗಳು, ಮೂರು ದಿನಗಳು.</verse>
				<verse number="19">ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ, ನಿನ್ನನ್ನು ಮರದ ಮೇಲೆ ತೂಗು ಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವುವು,” ಎಂದನು.</verse>
				<verse number="20">ಮೂರನೆಯ ದಿನದಲ್ಲಿ ಫರೋಹನ ಜನ್ಮದಿನವಾಗಿದ್ದರಿಂದ ಅವನು ತನ್ನ ಸೇವಕರೆಲ್ಲರಿಗೂ ಔತಣವನ್ನು ಮಾಡಿಸಿ, ಮುಖ್ಯ ಪಾನದಾಯಕನನ್ನು ಮತ್ತು ಮುಖ್ಯ ರೊಟ್ಟಿಗಾರನನ್ನು ತನ್ನ ಅಧಿಕಾರಿಗಳ ಮುಂದೆ ನಿಲ್ಲಿಸಿದನು.</verse>
				<verse number="21">ಮುಖ್ಯ ಪಾನದಾಯಕನನ್ನು ತಿರುಗಿ ಉದ್ಯೋಗದಲ್ಲಿ ಇರಿಸಿದ್ದರಿಂದ, ಮತ್ತೆ ಅವನು ಫರೋಹನ ಕೈಗೆ ಪಾನಪಾತ್ರೆಯನ್ನು ಕೊಟ್ಟನು.</verse>
				<verse number="22">ಆದರೆ ಮುಖ್ಯ ರೊಟ್ಟಿಗಾರನನ್ನು ಗಲ್ಲಿಗೇರಿಸಿದನು. ಹೀಗೆ ಯೋಸೇಫನು ಹೇಳಿದ ಹೇಳಿದಂತೆಯೇ ಆಯಿತು.</verse>
				<verse number="23">ಆದರೂ ಪಾನದಾಯಕರ ಮುಖ್ಯಸ್ಥನು ಯೋಸೇಫನನ್ನು ಜ್ಞಾಪಕಮಾಡಿಕೊಳ್ಳದೆ ಅವನನ್ನು ಮರೆತುಬಿಟ್ಟನು.</verse>
			</chapter>
			<chapter number="41">
				<verse number="1">ಎರಡು ಪೂರ್ಣ ವರ್ಷಗಳು ಕಳೆದ ಮೇಲೆ ಫರೋಹನು ಒಂದು ಕನಸನ್ನು ಕಂಡನು. ಆ ಕನಸಿನಲ್ಲಿ ಅವನು ನೈಲ್ ನದಿಯ ಬಳಿಯಲ್ಲಿ ನಿಂತಿದ್ದನು.</verse>
				<verse number="2">ಲಕ್ಷಣವಾದ ಮತ್ತು ಕೊಬ್ಬಿದ ಏಳು ಹಸುಗಳು ನೈಲ್ ನದಿಯೊಳಗಿಂದ ಏರಿಬಂದು, ಆಪುಹುಲ್ಲುಗಾವಲಲ್ಲಿ ಮೇಯುತ್ತಿದ್ದವು.</verse>
				<verse number="3">ಅವಲಕ್ಷಣವಾದ ಬೇರೆ ಏಳು ಬಡಹಸುಗಳು ಅವುಗಳ ಹಿಂದೆ ನದಿಯೊಳಗಿಂದ ಏರಿಬಂದು, ಆ ಹಸುಗಳ ಹತ್ತಿರ ನೈಲ್ ನದಿ ತೀರದಲ್ಲಿ ನಿಂತಿದ್ದವು.</verse>
				<verse number="4">ಆ ಅವಲಕ್ಷಣವಾದ ಬಡಹಸುಗಳು, ಕೊಬ್ಬಿದ ಮತ್ತು ಲಕ್ಷಣವಾದ ಏಳು ಹಸುಗಳನ್ನು ತಿಂದುಬಿಟ್ಟವು. ಆಗ ಫರೋಹನು ಎಚ್ಚೆತ್ತನು.</verse>
				<verse number="5">ಅವನು ತಿರುಗಿ ನಿದ್ರೆ ಮಾಡಿದಾಗ, ಎರಡನೆಯ ಸಾರಿ ಕನಸನ್ನು ಕಂಡನು. ಒಂದೇ ದಂಟಿನಲ್ಲಿ ಏಳು ಒಳ್ಳೆಯ ಪುಷ್ಟಿಯಾದ ತೆನೆಗಳು ಎದ್ದವು.</verse>
				<verse number="6">ಅವುಗಳ ಹಿಂದೆಯೇ ಪೂರ್ವದಿಕ್ಕಿನ ಗಾಳಿಯಿಂದ ಬತ್ತಿ, ಒಣಗಿ ಹೋದ ಏಳು ತೆನೆಗಳು ಮೊಳೆತವು.</verse>
				<verse number="7">ಆ ಬತ್ತಿ ಹೋಗಿದ್ದ ತೆನೆಗಳು, ಪುಷ್ಟಿಯಾದ ಏಳು ತೆನೆಗಳನ್ನು ನುಂಗಿ ಬಿಟ್ಟವು. ಫರೋಹನು ಎಚ್ಚೆತ್ತಾಗ ಅದು ಕನಸಾಗಿತ್ತು.</verse>
				<verse number="8">ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡಿತು. ಆದ್ದರಿಂದ ಅವನು ಈಜಿಪ್ಟಿನ ಎಲ್ಲಾ ಮಂತ್ರವಾದಿಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೆಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ, ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.</verse>
				<verse number="9">ಆಗ ಪಾನದಾಯಕರ ಮುಖ್ಯಸ್ಥನು ಫರೋಹನಿಗೆ, “ಈ ಹೊತ್ತು ನನ್ನ ತಪ್ಪನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.</verse>
				<verse number="10">ಫರೋಹನು ತನ್ನ ಸೇವಕರ ಮೇಲೆ ಕೋಪಿಸಿಕೊಂಡಾಗ, ನನ್ನನ್ನೂ, ರೊಟ್ಟಿಗಾರರ ಮುಖ್ಯಸ್ಥನನ್ನೂ ಮೈಗಾವಲಿನ ದಳಪತಿಯ ಮನೆಯಲ್ಲಿ ಕಾವಲಲ್ಲಿ ಇಟ್ಟಿದ್ದೀರಿ.</verse>
				<verse number="11">ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆ ಬೇರೆ ಅರ್ಥವಿತ್ತು.</verse>
				<verse number="12">ಮೈಗಾವಲಿನ ದಳಪತಿಗೆ ಸೇವಕನಾಗಿದ್ದ ಹಿಬ್ರಿಯ ಯೌವನಸ್ಥನು ಅಲ್ಲಿ ನಮ್ಮ ಸಂಗಡ ಇದ್ದನು. ಅವನಿಗೆ ನಾವು ನಮ್ಮ ಕನಸುಗಳನ್ನು ತಿಳಿಸಿದಾಗ, ಅವನು ನಮ್ಮ ನಮ್ಮ ಕನಸಿನ ಅರ್ಥವನ್ನು ಹೇಳಿದನು.</verse>
				<verse number="13">ಅವನು ಹೇಳಿದ ಅರ್ಥದಂತೆಯೇ ನಮಗಾಯಿತು. ನಾನು ನನ್ನ ಸ್ಥಾನವನ್ನು ಪುನಃ ಪಡೆದುಕೊಂಡೆನು, ಇನ್ನೊಬ್ಬನನ್ನು ಗಲ್ಲಿಗೇರಿಸಲಾಯಿತು,” ಎಂದು ಹೇಳಿದನು.</verse>
				<verse number="14">ಆಗ ಫರೋಹನು ಯೋಸೇಫನನ್ನು ಕರೆತರುವಂತೆ ಸೇವಕರನ್ನು ಕಳುಹಿಸಿದನು. ಅವರು ಅವನನ್ನು ತ್ವರೆಯಾಗಿ ಕಾರಾಗೃಹದಿಂದ ಹೊರಗೆ ತಂದರು. ಅವನು ಕ್ಷೌರಮಾಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿ ಫರೋಹನ ಬಳಿಗೆ ಬಂದನು.</verse>
				<verse number="15">ಆಗ ಫರೋಹನು ಯೋಸೇಫನಿಗೆ, “ನಾನು ಕನಸನ್ನು ಕಂಡಿದ್ದೇನೆ, ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ, ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ,” ಎಂದನು.</verse>
				<verse number="16">ಯೋಸೇಫನು ಫರೋಹನಿಗೆ ಉತ್ತರವಾಗಿ, “ಅದನ್ನು ನಾನು ಹೇಳಲಾರೆ, ಆದರೆ ದೇವರು ಫರೋಹನಿಗೆ ಮೆಚ್ಚಿಕೆಯಾದ ಉತ್ತರವನ್ನು ಕೊಡುವರು,” ಎಂದನು.</verse>
				<verse number="17">ಅದಕ್ಕೆ ಫರೋಹನು ಯೋಸೇಫನಿಗೆ, “ನನ್ನ ಕನಸಿನಲ್ಲಿ, ನಾನು ನೈಲ್ ನದಿಯ ತೀರದಲ್ಲಿ ನಿಂತುಕೊಂಡಿದ್ದೆನು.</verse>
				<verse number="18">ಆಗ ಕೊಬ್ಬಿದ ಮಾಂಸವಿದ್ದ ಲಕ್ಷಣವಾದ ಏಳು ಹಸುಗಳು ನೈಲ್ ನದಿಯೊಳಗಿಂದ ಏರಿಬಂದು, ಆಪುಹುಲ್ಲುಗಾವಲಲ್ಲಿ ಮೇಯುತ್ತಿದ್ದವು.</verse>
				<verse number="19">ಅವುಗಳ ಹಿಂದೆ ಅವಲಕ್ಷಣವಾದ ಕೊಬ್ಬಿಲ್ಲದ ಬೇರೆ ಏಳು ಬಡಹಸುಗಳು ಏರಿ ಬಂದವು. ಅಂಥ ಬಡ ಹಸುಗಳನ್ನು, ನಾನು ಈಜಿಪ್ಟ್ ದೇಶದಲ್ಲಿ ಎಲ್ಲಿಯೂ ನೋಡಿದ್ದಿಲ್ಲ.</verse>
				<verse number="20">ಅವಲಕ್ಷಣವಾದ ಬಡಹಸುಗಳು, ಕೊಬ್ಬಿದ ಆ ಏಳು ಹಸುಗಳನ್ನು ತಿಂದುಬಿಟ್ಟವು.</verse>
				<verse number="21">ಇವು ಅವುಗಳನ್ನು ತಿಂದ ಮೇಲೂ ಅವು ತಿಂದ ಹಾಗೆ ತೋರಲಿಲ್ಲ. ಅವು ಮೊದಲಿನಂತೆ ಬಡಕಲಾಗಿಯೇ ಇದ್ದವು. ತರುವಾಯ ನಾನು ಎಚ್ಚೆತ್ತೆನು.</verse>
				<verse number="22">“ನನಗೆ ಇನ್ನೊಂದು ಕನಸು ಬಂತು. ನಾನು ಆ ಕನಸಿನಲ್ಲಿ, ಒಂದೇ ದಂಟಿನಲ್ಲಿ ಪುಷ್ಟಿಯುಳ್ಳ ಏಳು ತೆನೆಗಳು ಇದ್ದವು.</verse>
				<verse number="23">ಪೂರ್ವದಿಕ್ಕಿನ ಗಾಳಿಯಿಂದ ಒಣಗಿ ಬತ್ತಿ ಹೋಗಿದ್ದ ಏಳು ತೆನೆಗಳು ಅವುಗಳ ತರುವಾಯ ಮೊಳೆತವು.</verse>
				<verse number="24">ಆ ಒಣಗಿದ್ದ ಏಳು ತೆನೆಗಳು, ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಸಿದಾಗ, ಅದರ ಅರ್ಥವನ್ನು ನನಗೆ ಯಾರೂ ಹೇಳಲಿಲ್ಲ,” ಎಂದನು.</verse>
				<verse number="25">ಆಗ ಯೋಸೇಫನು ಫರೋಹನಿಗೆ, “ಫರೋಹನ ಎರಡು ಕನಸುಗಳ ವಿಷಯ ಒಂದೇ, ದೇವರು ಮಾಡಲಿರುವುದನ್ನು ಫರೋಹನಿಗೆ ತಿಳಿಸಿದ್ದಾರೆ.</verse>
				<verse number="26">ಆ ಏಳು ಒಳ್ಳೆಯ ಹಸುಗಳು ಏಳು ವರ್ಷಗಳು; ಏಳು ಒಳ್ಳೆಯ ತೆನೆಗಳೂ, ಏಳು ವರ್ಷಗಳೇ. ಇವೆರಡು ಕನಸುಗಳ ಅರ್ಥ ಒಂದೇ.</verse>
				<verse number="27">ಅವುಗಳ ತರುವಾಯ ಏರಿ ಬಂದ ಬಡಕಲಾದ ಕೆಟ್ಟ ಏಳು ಹಸುಗಳು ಮತ್ತು ಪೂರ್ವದಿಕ್ಕಿನ ಗಾಳಿಯಿಂದ ಒಣಗಿ ಬತ್ತಿ ಹೋಗಿದ್ದ ಏಳು ತೆನೆಗಳು, ಬರಲಿರುವ ಏಳು ವರ್ಷಗಳು.</verse>
				<verse number="28">“ನಾನು ಫರೋಹನಿಗೆ ಹೇಳಿದ ಮಾತಿನಂತೆ ದೇವರು ಮಾಡಲಿರುವುದನ್ನು ಫರೋಹನಿಗೆ ತೋರಿಸಿದ್ದಾರೆ.</verse>
				<verse number="29">ಈಜಿಪ್ಟ್ ದೇಶದಲ್ಲೆಲ್ಲಾ ಬಹುಸಮೃದ್ಧಿಯ ಸುಭಿಕ್ಷ ವರ್ಷಗಳು ಬರುತ್ತವೆ.</verse>
				<verse number="30">ಆದರೆ ಅವುಗಳ ಹಿಂದೆ ಏಳು ವರ್ಷಗಳ ಬರಗಾಲ ಬರುತ್ತವೆ. ಆಗ ಈಜಿಪ್ಟಿನಲ್ಲಿದ್ದ ಸುಭಿಕ್ಷವು ಮರೆಯುವಂತಾಗುವುದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವುದು.</verse>
				<verse number="31">ತರುವಾಯ ಬರಗಾಲವು ಬಹಳ ಕಠಿಣವಾಗಿರುವುದರಿಂದ, ಸುಭಿಕ್ಷ ಕಾಲದ ನೆನಪು ದೇಶದಲ್ಲಿ ಇರದೆ ಹೋಗುವುದು.</verse>
				<verse number="32">ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದುದರಿಂದ, ಆ ಕಾರ್ಯವು ದೇವರಿಂದ ಸ್ಥಿರಪಡಿಸಲಾಗಿದೆ. ಆದ್ದರಿಂದ ದೇವರು ಅದನ್ನು ಬೇಗನೆ ನೆರವೇರಿಸುವರು.</verse>
				<verse number="33">“ಹೀಗಿರುವುದರಿಂದ ಈಗ ಫರೋಹನು ವಿವೇಕಿಯಾದ ಬುದ್ಧಿಯುಳ್ಳ ಒಬ್ಬನನ್ನು ನೋಡಿ, ಅವನನ್ನು ಈಜಿಪ್ಟ್ ದೇಶದ ಮೇಲೆ ನೇಮಿಸಲಿ.</verse>
				<verse number="34">ಫರೋಹನು ಅಧಿಕಾರಿಗಳನ್ನು ನೇಮಿಸಿ, ದೇಶದ ಮೇಲಿಟ್ಟು, ಸುಭಿಕ್ಷದ ಏಳು ವರ್ಷಗಳಲ್ಲಿ ಈಜಿಪ್ಟ್ ದೇಶದ ಐದರಲ್ಲಿ ಒಂದು ಭಾಗ ಬೆಳೆಯನ್ನು ಕಂದಾಯವಾಗಿ ತೆಗೆದುಕೊಳ್ಳಲಿ.</verse>
				<verse number="35">ಅಧಿಕಾರಿಗಳು ಮುಂಬರುವ ಈ ಒಳ್ಳೆಯ ವರ್ಷಗಳ ಆಹಾರವನ್ನೆಲ್ಲಾ ಕೂಡಿಸಿ, ಫರೋಹನ ಕೈಕೆಳಗೆ ಧಾನ್ಯವನ್ನು ಪಟ್ಟಣಗಳಲ್ಲಿ ಇಟ್ಟುಕೊಂಡು ಕಾಯಲಿ.</verse>
				<verse number="36">ಈಜಿಪ್ಟಿನಲ್ಲಿ ಬರುವದಕ್ಕಿರುವ ಬರಗಾಲದ ಏಳು ವರ್ಷಗಳಲ್ಲಿ ದೇಶವು ಹಾಳಾಗದಂತೆ, ಆಹಾರವು ದೇಶಕ್ಕೆ ಸಂಗ್ರಹವಾಗಿರುವುದು,” ಎಂದನು.</verse>
				<verse number="37">ಈ ಮಾತುಗಳು ಫರೋಹನಿಗೂ, ಅವನ ಸೇವಕರಿಗೂ ಒಳ್ಳೆಯದೆಂದು ತೋರಿತು.</verse>
				<verse number="38">ಫರೋಹನು ತನ್ನ ಸೇವಕರಿಗೆ, “ಯೋಸೇಫನಂಥ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ?” ಎಂದನು.</verse>
				<verse number="39">ಫರೋಹನು ಯೋಸೇಫನಿಗೆ, “ದೇವರು ನಿನಗೆ ಇವುಗಳನ್ನೆಲ್ಲಾ ತೋರಿಸಿದ ಮೇಲೆ, ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.</verse>
				<verse number="40">ನೀನೇ ನನ್ನ ಅರಮನೆಯ ಅಧಿಕಾರಿಯಾಗಿರಬೇಕು. ನಿನ್ನ ಮಾತಿನ ಪ್ರಕಾರ ನನ್ನ ಜನರೆಲ್ಲಾ ಅಧೀನವಾಗಿರಲಿ. ಸಿಂಹಾಸನದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು,” ಎಂದನು.</verse>
				<verse number="41">ಇದಲ್ಲದೆ ಫರೋಹನು ಯೋಸೇಫನಿಗೆ, “ನೋಡು, ನಾನು ನಿನ್ನನ್ನು ಈಜಿಪ್ಟ್ ದೇಶದ ಮೇಲೆಲ್ಲಾ ನೇಮಿಸಿದ್ದೇನೆ,” ಎಂದನು.</verse>
				<verse number="42">ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು, ನಾರುಮಡಿಯ ವಸ್ತ್ರವನ್ನು ತೊಡಿಸಿ, ಚಿನ್ನದ ಸರಪಣಿಯನ್ನು ಅವನ ಕೊರಳಿಗೆ ಹಾಕಿದನು.</verse>
				<verse number="43">ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂಡಿಸಿದಾಗ, “ಈತನನ್ನು ನಮಸ್ಕರಿಸಿ ದಾರಿಮಾಡಿರಿ,” ಎಂದು ಪ್ರಕಟಿಸಿದನು. ಹೀಗೆ ಅವನನ್ನು ಈಜಿಪ್ಟ್ ದೇಶವನ್ನೆಲ್ಲಾ ಆಳುವವನನ್ನಾಗಿ ನೇಮಿಸಿದನು.</verse>
				<verse number="44">ಇದಲ್ಲದೆ ಫರೋಹನು ಯೋಸೇಫನಿಗೆ, “ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಈಜಿಪ್ಟ್ ದೇಶದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ, ಕಾಲನ್ನಾಗಲಿ ಎತ್ತಬಾರದು,” ಎಂದನು.</verse>
				<verse number="45">ಫರೋಹನು ಯೋಸೇಫನಿಗೆ ಸಾಫ್ನತ್ಪನ್ನೇಹ ಎಂದು ಹೆಸರಿಟ್ಟನು. ತರುವಾಯ ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯನ್ನು ಅವನಿಗೆ ಹೆಂಡತಿಯಾಗಿ ಕೊಟ್ಟನು. ತರುವಾಯ ಯೋಸೇಫನು ಈಜಿಪ್ಟ್ ದೇಶದಲ್ಲೆಲ್ಲಾ ಸಂಚರಿಸಿದನು.</verse>
				<verse number="46">ಯೋಸೇಫನು ಈಜಿಪ್ಟಿನ ಅರಸನಾದ ಫರೋಹನ ಮುಂದೆ ನಿಂತಾಗ, ಮೂವತ್ತು ವರ್ಷದವನಾಗಿದ್ದನು. ತರುವಾಯ ಯೋಸೇಫನು ಫರೋಹನ ಸನ್ನಿಧಿಯಿಂದ ಹೊರಟು, ಈಜಿಪ್ಟ್ ದೇಶದಲ್ಲೆಲ್ಲಾ ಸಂಚಾರಮಾಡಿದನು.</verse>
				<verse number="47">ಆ ದೇಶವು ಸುಭಿಕ್ಷದ ಏಳು ವರ್ಷಗಳಲ್ಲಿ ರಾಶಿರಾಶಿಯಾಗಿ ಫಲಕೊಟ್ಟಿತು.</verse>
				<verse number="48">ಹೀಗಿರಲಾಗಿ ಅವನು ಈಜಿಪ್ಟ್ ದೇಶದಲ್ಲಿದ್ದ ಆ ಏಳು ವರ್ಷಗಳ ಆಹಾರವನ್ನೆಲ್ಲಾ ಕೂಡಿಸಿ, ಪಟ್ಟಣಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು.</verse>
				<verse number="49">ಈ ಮೇರೆಗೆ ಯೋಸೇಫನು ದವಸ ಧಾನ್ಯವನ್ನು ಸಮುದ್ರದ ಮರಳಿನಷ್ಟು ರಾಶಿರಾಶಿಯಾಗಿ ಕೂಡಿಸಿ ಲೆಕ್ಕಮಾಡುವುದನ್ನು ಬಿಟ್ಟುಬಿಟ್ಟನು. ಅದನ್ನು ಲೆಕ್ಕಮಾಡುವುದಕ್ಕೆ ಆಗದೆ ಹೋಯಿತು.</verse>
				<verse number="50">ಇದಲ್ಲದೆ ಬರಗಾಲದ ವರ್ಷಗಳು ಬರುವುದಕ್ಕೆ ಮುಂಚೆ, ಯೋಸೇಫನಿಗೆ ಇಬ್ಬರು ಮಕ್ಕಳು ಹುಟ್ಟಿದರು. ಓನಿನ ಯಾಜಕನಾದ ಪೋಟೀಫೆರನ ಮಗಳಾದ ಆಸನತ್, ಅವಳನ್ನು ಯೋಸೇಫನಿಗೆ ಹೆತ್ತಳು.</verse>
				<verse number="51">ಜೇಷ್ಠಪುತ್ರನಿಗೆ ಯೋಸೇಫನು ಮನಸ್ಸೆ ಎಂದು ಹೆಸರಿಟ್ಟನು. ಏಕೆಂದರೆ ಅವನು, “ದೇವರು ನನ್ನ ಕಷ್ಟವನ್ನು ಮತ್ತು ನನ್ನ ತಂದೆಯ ಮನೆಯನ್ನು ಮರೆತುಬಿಡುವಂತೆ ಮಾಡಿದರು,” ಎಂದನು.</verse>
				<verse number="52">ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯೀಮ್ ಎಂದು ಹೆಸರಿಟ್ಟನು. “ನಾನು ಬಾಧೆಯನ್ನನುಭವಿಸಿದ ದೇಶ ಫಲಭರಿತವಾಗುವಂತೆ ದೇವರು ಮಾಡಿದ್ದಾರೆ,” ಎಂದನು.</verse>
				<verse number="53">ಈಜಿಪ್ಟ್ ದೇಶದಲ್ಲಿದ್ದ ಸುಭಿಕ್ಷದ ಏಳು ವರ್ಷಗಳು ಮುಗಿದ ತರುವಾಯ,</verse>
				<verse number="54">ಯೋಸೇಫನು ಹೇಳಿದಂತೆ ಬರುವುದಕ್ಕಿದ್ದ ಬರಗಾಲದ ಏಳು ವರ್ಷಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರಗಾಲವಿತ್ತು. ಆದರೆ ಈಜಿಪ್ಟ್ ದೇಶದಲ್ಲೆಲ್ಲಾ ಆಹಾರವಿತ್ತು.</verse>
				<verse number="55">ಈಜಿಪ್ಟ್‌ದವರೆಲ್ಲಾ ಹಸಿದು, ಜನರು ಆಹಾರಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ, ಫರೋಹನು ಎಲ್ಲಾ ಈಜಿಪ್ಟಿನವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ನಿಮಗೆ ಹೇಳುವುದನ್ನು ಮಾಡಿರಿ,” ಎಂದನು.</verse>
				<verse number="56">ಈಜಿಪ್ಟಿನಲ್ಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಈಜಿಪ್ಟಿನವರಿಗೆ ಮಾರಿದನು. ಆಗ ಬರವು ಈಜಿಪ್ಟ್ ದೇಶದಲ್ಲಿ ಕಠಿಣವಾಗಿತ್ತು.</verse>
				<verse number="57">ಇದಲ್ಲದೆ ಭೂಮಿಯ ಮೇಲೆಲ್ಲಾ ಬರಗಾಲವು ಕಠಿಣವಾಗಿದ್ದದರಿಂದ, ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೆ ಈಜಿಪ್ಟಿಗೆ ಬರುತ್ತಿದ್ದರು.</verse>
			</chapter>
			<chapter number="42">
				<verse number="1">ಈಜಿಪ್ಟಿನಲ್ಲಿ ಧಾನ್ಯ ಉಂಟೆಂದು ಯಾಕೋಬನು ತಿಳಿದಾಗ, ಅವನು ತನ್ನ ಪುತ್ರರಿಗೆ, “ನೀವು ಒಬ್ಬರನ್ನೊಬ್ಬರು ನೋಡಿಕೊಂಡು ಸುಮ್ಮನಿರುವುದೇನು?” ಎಂದನು.</verse>
				<verse number="2">ಅವನು ಮುಂದುವರಿಸಿ, “ಈಜಿಪ್ಟಿನಲ್ಲಿ ಧಾನ್ಯ ಉಂಟೆಂದು ನಾನು ಕೇಳಿದ್ದೇನೆ. ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಇಳಿದು ಹೋಗಿ, ನಮಗಾಗಿ ಅಲ್ಲಿಂದ ಧಾನ್ಯವನ್ನು ಕೊಂಡುಕೊಳ್ಳಿರಿ,” ಎಂದನು.</verse>
				<verse number="3">ಆಗ ಯೋಸೇಫನ ಹತ್ತು ಮಂದಿ ಸಹೋದರರು ಈಜಿಪ್ಟಿನಲ್ಲಿ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೆ ಹೋದರು.</verse>
				<verse number="4">ಆದರೆ ಯೋಸೇಫನ ಸಹೋದರನಾದ ಬೆನ್ಯಾಮೀನನನ್ನು ಕಳುಹಿಸಲಿಲ್ಲ. ಏಕೆಂದರೆ ಅವನಿಗೆ ಕೇಡು ಬಂದೀತೆಂದು ಹೇಳಿ, ಯಾಕೋಬನು ಅವನನ್ನು ಅವನ ಸಹೋದರರ ಸಂಗಡ ಕಳುಹಿಸಲಿಲ್ಲ.</verse>
				<verse number="5">ಕಾನಾನ್ ದೇಶದಲ್ಲಿ ಬರವಿದ್ದುದರಿಂದ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೆ ಬರುವವರೊಂದಿಗೆ ಇಸ್ರಾಯೇಲನ ಪುತ್ರರೂ ಬಂದರು.</verse>
				<verse number="6">ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರುವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು, ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.</verse>
				<verse number="7">ಯೋಸೇಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದರೂ, ತಿಳಿಯದವನ ಹಾಗೆ ಅನ್ಯನಂತೆ ಕಠಿಣವಾದ ಮಾತುಗಳನ್ನಾಡಿ, ಅವರಿಗೆ, “ಎಲ್ಲಿಂದ ಬಂದಿರಿ?” ಎಂದನು. ಅದಕ್ಕೆ ಅವರು, “ಆಹಾರ ಕೊಂಡುಕೊಳ್ಳುವುದಕ್ಕೆ ಕಾನಾನ್ ದೇಶದಿಂದ ಬಂದೆವು,” ಎಂದರು.</verse>
				<verse number="8">ಯೋಸೇಫನು ತನ್ನ ಸಹೋದರರನ್ನು ಗುರುತಿಸಿದರೂ, ಅವರು ಅವನನ್ನು ಗುರುತಿಸಲಿಲ್ಲ.</verse>
				<verse number="9">ಆಗ ಯೋಸೇಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದರೂ ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವರಿಗೆ, “ನೀವು ಗೂಢಚಾರರು, ದೇಶದ ಒಳಗುಟ್ಟನ್ನು ನೋಡುವುದಕ್ಕೆ ಬಂದಿದ್ದೀರಿ,” ಎಂದನು.</verse>
				<verse number="10">ಅದಕ್ಕವರು, “ಅಲ್ಲ, ನಮ್ಮ ಒಡೆಯಾ, ನಿನ್ನ ದಾಸರಾದ ನಾವು ಆಹಾರವನ್ನು ಕೊಂಡುಕೊಳ್ಳುವದಕ್ಕೆ ಬಂದಿದ್ದೇವೆ.</verse>
				<verse number="11">ನಾವೆಲ್ಲರೂ ಒಬ್ಬ ಮನುಷ್ಯನ ಪುತ್ರರಾಗಿದ್ದು ಸತ್ಯವಂತರಾಗಿದ್ದೇವೆ. ಆದ್ದರಿಂದ ನಿನ್ನ ದಾಸರು ಗೂಢಚಾರರಲ್ಲ,” ಎಂದರು.</verse>
				<verse number="12">ಆದರೆ ಅವನು ಅವರಿಗೆ, “ಇಲ್ಲ, ದೇಶದ ಒಳಗುಟ್ಟನ್ನು ನೀವು ತಿಳಿದುಕೊಳ್ಳುವುದಕ್ಕೋಸ್ಕರವೇ ಬಂದಿದ್ದೀರಿ,” ಎಂದನು.</verse>
				<verse number="13">ಅದಕ್ಕವರು, “ನಿನ್ನ ದಾಸರಾದ ನಾವು ಹನ್ನೆರಡು ಸಹೋದರರು. ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಈಗ ಚಿಕ್ಕವನು ನನ್ನ ತಂದೆಯೊಂದಿಗೆ ಇದ್ದಾನೆ, ಮತ್ತೊಬ್ಬನು ಇಲ್ಲ,” ಎಂದು ಹೇಳಿದರು.</verse>
				<verse number="14">ಆಗ ಯೋಸೇಫನು ಅವರಿಗೆ, “ನೀವು ಗೂಢಚಾರರೆಂದು ನಾನು ನಿಮಗೆ ಹೇಳಿದ ಮಾತು ನಿಜವೇ!</verse>
				<verse number="15">ಈಗ ನಿಮ್ಮನ್ನು ನಾನು ಪರೀಕ್ಷಿಸುತ್ತೇನೆ. ಹೇಗೆಂದರೆ, ನಿಮ್ಮ ಚಿಕ್ಕ ಸಹೋದರನು ಇಲ್ಲಿಗೆ ಬಂದ ಹೊರತು, ಫರೋಹನ ಜೀವದಾಣೆ ನೀವು ಇಲ್ಲಿಂದ ಹೋಗಬಾರದು.</verse>
				<verse number="16">ನಿಮ್ಮಲ್ಲಿಂದ ಒಬ್ಬನನ್ನು ಕಳುಹಿಸಿರಿ, ಅವನು ನಿಮ್ಮ ಸಹೋದರನನ್ನು ಕರೆದುಕೊಂಡು ಬರಲಿ. ಆದರೆ ನೀವು ಸೆರೆಮನೆಯಲ್ಲಿರಬೇಕು. ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ, ಇಲ್ಲವೋ ಎಂದು ನಿಮ್ಮ ಮಾತುಗಳನ್ನು ಪರೀಕ್ಷಿಸುತ್ತೇನೆ. ಇಲ್ಲದಿದ್ದರೆ, ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು,” ಎಂದು ಹೇಳಿದನು.</verse>
				<verse number="17">ಯೋಸೇಫನು ಎಲ್ಲರನ್ನು ಒಟ್ಟಿಗೆ ಮೂರು ದಿನಗಳು ಸೆರೆಯಲ್ಲಿಟ್ಟನು.</verse>
				<verse number="18">ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನಾಗಿದ್ದೇನೆ.</verse>
				<verse number="19">ನೀವು ಸತ್ಯವಂತರಾಗಿದ್ದರೆ, ನಿಮ್ಮ ಸಹೋದರರಲ್ಲಿ ಒಬ್ಬನು ನೀವು ಇದ್ದ ಸೆರೆಮನೆಯಲ್ಲಿ ಬಂಧಿತನಾಗಿರಲಿ. ಆದರೆ ನೀವು ಎಲ್ಲರೂ ನಿಮ್ಮ ಮನೆಗಳ ಕ್ಷಾಮಕ್ಕೆ ಧಾನ್ಯಗಳನ್ನು ತೆಗೆದುಕೊಂಡು ಹೋಗಿರಿ.</verse>
				<verse number="20">ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ಕರೆತನ್ನಿರಿ. ಆಗ ನಿಮ್ಮ ಮಾತುಗಳು ಸತ್ಯವೆಂದು ದೃಢವಾಗುವವು. ನೀವು ಸಾಯದೆ ಉಳಿಯುವಿರಿ,” ಎಂದನು. ಅವರು ಹಾಗೆಯೇ ಮಾಡಿದರು.</verse>
				<verse number="21">ಆಗ ಅವರು, “ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ, ಅವನ ಪ್ರಾಣಸಂಕಟವನ್ನು ಕಂಡರೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು,” ಎಂದು ಮಾತಾಡಿಕೊಂಡರು.</verse>
				<verse number="22">ಆಗ ರೂಬೇನನು ಅವರಿಗೆ ಉತ್ತರವಾಗಿ, “ಹುಡುಗನಿಗೆ ಏನೂ ಕೇಡು ಮಾಡಬೇಡಿರಿ, ಎಂದು ನಾನು ನಿಮಗೆ ಹೇಳಿದರೂ ನೀವು ಕೇಳಲಿಲ್ಲ. ಆದ್ದರಿಂದ ಅವನಿಗಾದ ಪ್ರಾಣಹಾನಿಯ ವಿಷಯದಲ್ಲಿ ಈಗ ನಾವು ಲೆಕ್ಕ ಒಪ್ಪಿಸುತ್ತಿದ್ದೇವೆ,” ಎಂದನು.</verse>
				<verse number="23">ಆದರೆ ಯೋಸೇಫನು ಅವರು ಆಡಿದ್ದನ್ನು ತಿಳಿದುಕೊಳ್ಳುತ್ತಿದ್ದನು ಎಂಬುದು ಅವರಿಗೆ ಗೊತ್ತಾಗಲಿಲ್ಲ. ಏಕೆಂದರೆ ಯೋಸೇಫನು ಅನುವಾದಕನ ಮುಖಾಂತರ ಅವರ ಸಂಗಡ ಮಾತಾಡುತ್ತಿದ್ದನು.</verse>
				<verse number="24">ಅನಂತರ ಯೋಸೇಫನು ಅವರ ಬಳಿಯಿಂದ ಹೊರಟುಹೋಗಿ ಅತ್ತನು. ಮತ್ತೆ ಅವರ ಬಳಿಗೆ ಬಂದು, ಅವರ ಸಂಗಡ ಮಾತನಾಡಿ ಅವರೊಂದಿಗೆ ಸಿಮೆಯೋನನನ್ನು ತಂದು, ಅವರ ಕಣ್ಣೆದುರಿನಲ್ಲಿ ಬಂಧಿಸಿ ಸೆರೆಯಲ್ಲಿ ಹಾಕಿದನು.</verse>
				<verse number="25">ತರುವಾಯ ಯೋಸೇಫನು ಧಾನ್ಯವನ್ನು ತುಂಬಿಸಬೇಕೆಂದೂ, ಒಬ್ಬೊಬ್ಬನ ಚೀಲದಲ್ಲಿ ಅವನವನ ಹಣವನ್ನು ತಿರುಗಿ ಇಡಬೇಕೆಂದೂ, ಪ್ರಯಾಣಕ್ಕಾಗಿ ಅವರಿಗೆ ಆಹಾರ ಸರಬರಾಜು ಮಾಡಬೇಕೆಂದೂ ಆಜ್ಞಾಪಿಸಿದನು.</verse>
				<verse number="26">ಆಗ ಅವರು ತಮ್ಮ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು, ಅಲ್ಲಿಂದ ಹೊರಟು ಹೋದರು.</verse>
				<verse number="27">ಆಗ ಒಬ್ಬನು ತನ್ನ ಕತ್ತೆಗೆ ಆಹಾರವನ್ನು ಕೊಡುವುದಕ್ಕೆ ವಸತಿಗೃಹದಲ್ಲಿ ತನ್ನ ಚೀಲವನ್ನು ಬಿಚ್ಚಿದಾಗ, ಚೀಲದ ಬಾಯಲ್ಲಿಟ್ಟಿದ್ದ ತನ್ನ ಹಣವನ್ನು ಕಂಡನು.</verse>
				<verse number="28">ಅವನು ತನ್ನ ಸಹೋದರರಿಗೆ, “ನನ್ನ ಹಣವನ್ನು ಹಿಂದಕ್ಕೆ ಕೊಟ್ಟಿದ್ದಾರೆ, ಅದು ನನ್ನ ಚೀಲದಲ್ಲಿದೆ,” ಎಂದು ಹೇಳಿದ. ಅವರಿಗೆ ಹೃದಯ ಕಂಪನವಾದಂತಾಗಿ ಹೆದರಿ ಒಬ್ಬರಿಗೊಬ್ಬರು, “ದೇವರು ನಮಗೆ ಮಾಡಿದ್ದೇನು?” ಎಂದರು.</verse>
				<verse number="29">ಅವರು ಕಾನಾನ್ ದೇಶದಲ್ಲಿದ್ದ ತಮ್ಮ ತಂದೆ ಯಾಕೋಬನ ಬಳಿಗೆ ಬಂದಾಗ, ತಮಗೆ ಸಂಭವಿಸಿದ್ದೆಲ್ಲವನ್ನೂ ಅವನಿಗೆ ತಿಳಿಸಿದರು.</verse>
				<verse number="30">ದೇಶದ ಅಧಿಪತಿಯಾಗಿರುವ ಮನುಷ್ಯನು ನಮ್ಮ ಸಂಗಡ ಕಠಿಣವಾಗಿ ಮಾತನಾಡಿ, ದೇಶದ ಗೂಢಚಾರರನ್ನಾಗಿ ನಮ್ಮನ್ನು ಎಣಿಸಿದನು.</verse>
				<verse number="31">ನಾವು ಅವನಿಗೆ, “ನಾವು ಗೂಢಚಾರರಲ್ಲ, ಸತ್ಯವಂತರೇ.</verse>
				<verse number="32">ನಾವು ಹನ್ನೆರಡು ಮಂದಿ ಸಹೋದರರಾಗಿದ್ದು, ಒಂದೇ ತಂದೆಯ ಪುತ್ರರಾಗಿದ್ದೇವೆ, ಒಬ್ಬನು ಇಲ್ಲ, ಚಿಕ್ಕವನು ಇಂದು ನಮ್ಮ ತಂದೆಯ ಸಂಗಡ ಕಾನಾನ್ ದೇಶದಲ್ಲಿ ಇದ್ದಾನೆ,” ಎಂದೆವು.</verse>
				<verse number="33">“ಆಗ ದೇಶದ ಪ್ರಭುವಾಗಿರುವ ಆ ಮನುಷ್ಯನು, ‘ನೀವು ಯಥಾರ್ಥರೆಂದು ನಾನು ಇದರಲ್ಲಿ ತಿಳಿದುಕೊಳ್ಳುವೆನು. ನೀವು ನಿಮ್ಮ ಸಹೋದರರಲ್ಲಿ ಒಬ್ಬನನ್ನು ನನ್ನ ಬಳಿಯಲ್ಲಿಟ್ಟು, ನಿಮ್ಮ ಮನೆಯ ಕ್ಷಾಮಕ್ಕೆ ಅವಶ್ಯವಾದದ್ದನ್ನು ತೆಗೆದುಕೊಂಡು ಹೋಗಿರಿ.</verse>
				<verse number="34">ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ. ಆಗ ನೀವು ಗೂಢಚಾರರಲ್ಲವೆಂದೂ, ಯಥಾರ್ಥರೆಂದೂ ತಿಳಿದುಕೊಂಡು, ನಿಮ್ಮ ಸಹೋದರರನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು,’ ಎಂದು ಹೇಳಿದನು,” ಎಂದರು.</verse>
				<verse number="35">ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ, ಅವನವನ ಹಣದ ಗಂಟು, ಅವನವನ ಚೀಲದಲ್ಲಿ ಇತ್ತು. ಅವರೂ, ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.</verse>
				<verse number="36">ಆಗ ಅವರ ತಂದೆ ಯಾಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗುವುದರಲ್ಲಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ,” ಎಂದನು.</verse>
				<verse number="37">ರೂಬೇನನು ತನ್ನ ತಂದೆಗೆ, “ನಾನು ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ, ನನ್ನ ಇಬ್ಬರು ಪುತ್ರರನ್ನು ಕೊಂದುಬಿಡು. ನೀನು ಬೆನ್ಯಾಮೀನನನ್ನು ನನ್ನ ಕೈಯಲ್ಲಿ ಒಪ್ಪಿಸು. ನಾನು ಅವನನ್ನು ನಿನ್ನ ಬಳಿಗೆ ತಿರುಗಿ ತರುವೆನು,” ಎಂದನು.</verse>
				<verse number="38">ಆದರೆ ಯಾಕೋಬನು, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು, ಅವನ ಅಣ್ಣ ಸತ್ತು ಹೋಗಿ, ಇವನೊಬ್ಬನೇ ಉಳಿದಿದ್ದಾನೆ. ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ, ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಸುವಿರಿ,” ಎಂದನು.</verse>
			</chapter>
			<chapter number="43">
				<verse number="1">ದೇಶದಲ್ಲಿ ಬರವು ಘೋರವಾಗಿತ್ತು.</verse>
				<verse number="2">ಅವರು ಈಜಿಪ್ಟಿನಿಂದ ತಂದಿದ್ದ ಧಾನ್ಯವು ತೀರಿದ ಮೇಲೆ ಅವರ ತಂದೆ ಅವರಿಗೆ, “ತಿರುಗಿ ಹೋಗಿ ನಮಗಾಗಿ ಸ್ವಲ್ಪ ಆಹಾರ ಕೊಂಡುಕೊಳ್ಳಿರಿ,” ಎಂದನು.</verse>
				<verse number="3">ಆಗ ಯೆಹೂದನು ಅವನಿಗೆ, “ಆ ಮನುಷ್ಯನು ನಮಗೆ ನಿಮ್ಮ ಸಹೋದರನು ನಿಮ್ಮ ಸಂಗಡ ಇದ್ದ ಹೊರತು, ನೀವು ನನ್ನ ಮುಖವನ್ನು ನೋಡಬಾರದೆಂದು, ನಮಗೆ ದೃಢವಾಗಿ ನಿರ್ಣಯಿಸಿ ಹೇಳಿದ್ದಾನೆ.</verse>
				<verse number="4">ನೀನು ನಮ್ಮ ತಮ್ಮನನ್ನು ನಮ್ಮ ಸಂಗಡ ಕಳುಹಿಸಿದರೆ, ನಾವು ಹೋಗಿ ನಿನಗಾಗಿ ಆಹಾರವನ್ನು ಕೊಂಡುಕೊಂಡು ಬರುತ್ತೇವೆ.</verse>
				<verse number="5">ಅವನನ್ನು ಕಳುಹಿಸದೆ ಹೋದರೆ, ನಾವು ಹೋಗುವುದಿಲ್ಲ. ಏಕೆಂದರೆ ಆ ಮನುಷ್ಯನು, ‘ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ, ನನ್ನ ಮುಖವನ್ನು ನೋಡಬಾರದು,’ ಎಂದು ನಮಗೆ ಹೇಳಿದ್ದಾನೆ,” ಎಂದನು.</verse>
				<verse number="6">ಇಸ್ರಾಯೇಲನು, “ನಿಮಗೆ ಇನ್ನೊಬ್ಬ ತಮ್ಮನು ಇದ್ದಾನೆಂದು ನೀವು ಏಕೆ ಆ ಮನುಷ್ಯನಿಗೆ ಹೇಳಿ ನನಗೆ ಕೇಡು ಮಾಡಿದ್ದೀರಿ?” ಎಂದನು.</verse>
				<verse number="7">ಅವರು ಅವನಿಗೆ, “ಆ ಮನುಷ್ಯನು ನಮ್ಮ ವಿಷಯದಲ್ಲಿ ಮತ್ತು ನಮ್ಮ ಮನೆಯವರ ವಿಷಯದಲ್ಲಿ ನೇರವಾಗಿ ಕೇಳಿ ಅವನು, ‘ನಿಮ್ಮ ತಂದೆ ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ಸಹೋದರನು ಇದ್ದಾನೋ?’ ಎಂದು ಕೇಳಿದನು. ಆಗ ಈ ಮಾತುಗಳಿಗೆ ತಕ್ಕ ಹಾಗೆ ನಾವು ಅವನಿಗೆ ತಿಳಿಸಿದೆವು. ‘ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿರಿ,’ ಎಂದು ಅವನು ನಮಗೆ ಹೇಳುತ್ತಾನೆಂದು ನಮಗೆ ಹೇಗೆ ತಿಳಿಯಲು ಸಾಧ್ಯ?” ಎಂದರು.</verse>
				<verse number="8">ಯೆಹೂದನು ತನ್ನ ತಂದೆ ಇಸ್ರಾಯೇಲನಿಗೆ, “ಆ ಹುಡುಗನನ್ನು ನನ್ನ ಸಂಗಡ ಕಳುಹಿಸು, ಆಗ ನಾವು ಹೋಗುವೆವು. ನಾವು, ನೀನೂ ಮತ್ತು ನಮ್ಮ ಮಕ್ಕಳು ಸಾಯದೆ ಬದುಕುವೆವು.</verse>
				<verse number="9">ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ, ಎಂದೆಂದಿಗೂ ನಾನು ಅಪರಾಧವನ್ನು ಹೊರುವೆನು.</verse>
				<verse number="10">ಏಕೆಂದರೆ ನಾವು ತಡಮಾಡದೆ ಇದ್ದಿದ್ದರೆ, ಇಷ್ಟರಲ್ಲಿ ಎರಡು ಸಾರಿ ಹೋಗಿ ಬರಬಹುದಾಗಿತ್ತು,” ಎಂದನು.</verse>
				<verse number="11">ಆಗ ಅವರ ತಂದೆ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ಫಲಗಳನ್ನು ನಿಮ್ಮೊಂದಿಗೆ ಇಟ್ಟುಕೊಂಡು, ಆ ಮನುಷ್ಯನಿಗೆ ಕಾಣಿಕೆ ತೆಗೆದುಕೊಂಡು ಹೋಗಿರಿ. ಅಂದರೆ, ಸ್ವಲ್ಪ ತೈಲ, ಸ್ವಲ್ಪ ಜೇನು, ಸುಗಂಧದ್ರವ್ಯ, ರಕ್ತಬೋಳ, ಆಕ್ರೋಡು ಮತ್ತು ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.</verse>
				<verse number="12">ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನೂ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಬಂದಿರಬಹುದು.</verse>
				<verse number="13">ನಿಮ್ಮ ಸಹೋದರನನ್ನು ಕರೆದುಕೊಂಡು ಆ ಮನುಷ್ಯನ ಬಳಿಗೆ ತಿರುಗಿ ಹೋಗಿರಿ.</verse>
				<verse number="14">ಸರ್ವಶಕ್ತ ದೇವರು ನಿಮ್ಮ ಮತ್ತೊಬ್ಬ ಸಹೋದರನನ್ನೂ ಬೆನ್ಯಾಮೀನನನ್ನೂ ಕಳುಹಿಸಿಕೊಡುವ ಹಾಗೆ, ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ,” ಎಂದನು.</verse>
				<verse number="15">ಆಗ ಅವರು ಆ ಕಾಣಿಕೆಯನ್ನು ತೆಗೆದುಕೊಂಡು, ತಮ್ಮ ಕೈಯಲ್ಲಿ ಎರಡರಷ್ಟು ಹಣವನ್ನೂ, ಬೆನ್ಯಾಮೀನನನ್ನೂ ಕರೆದುಕೊಂಡು ಈಜಿಪ್ಟಿಗೆ ಹೋಗಿ, ಯೋಸೇಫನ ಮುಂದೆ ನಿಂತರು.</verse>
				<verse number="16">ಯೋಸೇಫನು ಬೆನ್ಯಾಮೀನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ, “ಈ ಮನುಷ್ಯರನ್ನು ಮನೆಗೆ ಕರೆದುಕೊಂಡು ಹೋಗಿ, ಮಾಂಸದ ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಮಧ್ಯಾಹ್ನದಲ್ಲಿ ನನ್ನ ಸಂಗಡ ಊಟಮಾಡಬೇಕು,” ಎಂದನು.</verse>
				<verse number="17">ಯೋಸೇಫನು ಹೇಳಿದಂತೆ ಅವನು ಮಾಡಿದನು. ಅವನು ಆ ಮನುಷ್ಯರನ್ನು ಯೋಸೇಫನ ಮನೆಗೆ ಕರೆದುಕೊಂಡು ಹೋದನು.</verse>
				<verse number="18">ಯೋಸೇಫನ ಮನೆಗೆ ಕರೆತಂದದ್ದರಿಂದ ಅವರು ಭಯಪಟ್ಟು, “ಹಿಂದೆ ನಮ್ಮ ಚೀಲಗಳಲ್ಲಿ ತಿರುಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು, ನಮ್ಮ ಮೇಲೆ ಬಿದ್ದು, ನಮ್ಮನ್ನು ದಾಸರಾಗಿ ಮಾಡಿ, ನಮ್ಮ ಕತ್ತೆಗಳನ್ನು ತೆಗೆದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ,” ಎಂದರು.</verse>
				<verse number="19">ಆಗ ಅವರು ಯೋಸೇಫನ ಮನೆಯ ಬಳಿಗೆ ಹೋಗಿ, ಬಾಗಿಲಿನ ಮುಂದೆ ಗೃಹನಿರ್ವಾಹಕನ ಸಂಗಡ ಮಾತನಾಡಿ,</verse>
				<verse number="20">“ಒಡೆಯಾ, ನಾವು ಆಹಾರವನ್ನು ಕೊಂಡುಕೊಳ್ಳುವುದಕ್ಕೆ ಮೊದಲನೆಯ ಸಾರಿ ಬಂದದ್ದು ನಿಜವೇ.</verse>
				<verse number="21">ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ, ಪ್ರತಿಯೊಬ್ಬನ ಹಣವು ಅವನವನ ಚೀಲದ ಬಾಯಲ್ಲಿ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರುಗಿ ತೆಗೆದುಕೊಂಡು ಬಂದಿದ್ದೇವೆ.</verse>
				<verse number="22">ಇದಲ್ಲದೆ ಆಹಾರವನ್ನು ಕೊಂಡುಕೊಳ್ಳುವುದಕ್ಕೆ ಬೇರೆ ಹಣವನ್ನೂ ತಂದಿದ್ದೇವೆ. ಈ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೆಂದು ನಮಗೆ ತಿಳಿಯದು,” ಎಂದರು.</verse>
				<verse number="23">ಅದಕ್ಕವನು, “ನಿಮಗೆ ಸಮಾಧಾನವಿರಲಿ, ಭಯಪಡಬೇಡಿರಿ. ನಿಮ್ಮ ದೇವರೂ ನಿಮ್ಮ ತಂದೆಯ ದೇವರೂ ನಿಮ್ಮ ಚೀಲಗಳಲ್ಲಿ ನಿಮಗೆ ನಿಕ್ಷೇಪವನ್ನು ಕೊಟ್ಟಿದ್ದಾರೆ. ನಿಮ್ಮ ಹಣವು ನನಗೆ ಮುಟ್ಟಿದೆ,” ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ತಂದನು.</verse>
				<verse number="24">ಆ ಮನುಷ್ಯನು ಅವರನ್ನು ಯೋಸೇಫನ ಮನೆಯೊಳಗೆ ಕರೆದುಕೊಂಡು ಬಂದು ಅವರಿಗೆ ನೀರನ್ನು ಕೊಟ್ಟಾಗ, ಅವರು ತಮ್ಮ ಕಾಲುಗಳನ್ನು ತೊಳೆದುಕೊಂಡರು. ಇದಲ್ಲದೆ ಅವರ ಕತ್ತೆಗಳಿಗೆ ಮೇವನ್ನು ಹಾಕಿದನು.</verse>
				<verse number="25">ಅವರು ಅಲ್ಲಿ ಊಟ ಮಾಡಬೇಕೆಂದು ಕೇಳಿದ್ದರಿಂದ, ಯೋಸೇಫನು ಮಧ್ಯಾಹ್ನದಲ್ಲಿ ಮನೆಗೆ ಬರುವಷ್ಟರಲ್ಲಿ ಕಾಣಿಕೆಯನ್ನು ಸಿದ್ಧಮಾಡಿಕೊಂಡರು.</verse>
				<verse number="26">ಯೋಸೇಫನು ಮನೆಗೆ ಬಂದ ಮೇಲೆ, ತಮ್ಮ ಕೈಗಳಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತೆಗೆದುಕೊಂಡು ಬಂದು, ಅವನಿಗೆ ನೆಲದವರೆಗೂ ಅಡ್ಡಬಿದ್ದರು.</verse>
				<verse number="27">ಆಗ ಯೋಸೇಫನು ಅವರ ಕ್ಷೇಮಸಮಾಚಾರವನ್ನು ಕೇಳಿ, “ನೀವು ಹೇಳಿದ ವೃದ್ಧನಾದ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?” ಎಂದನು.</verse>
				<verse number="28">ಅದಕ್ಕವರು, “ನಿನ್ನ ದಾಸನಾದ ನಮ್ಮ ತಂದೆಯು ಕ್ಷೇಮದಿಂದಿದ್ದಾನೆ, ಅವನು ಇನ್ನೂ ಬದುಕಿದ್ದಾನೆ,” ಎಂದು ಹೇಳಿ ತಮ್ಮ ತಲೆಗಳನ್ನು ಮತ್ತೆ ಬಾಗಿಸಿ ವಂದಿಸಿದರು.</verse>
				<verse number="29">ಆಗ ಅವನು ತನ್ನ ದೃಷ್ಟಿಯಿಟ್ಟು, ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾಮೀನನನ್ನು ನೋಡಿ, “ನೀವು ನನಗೆ ಹೇಳಿದ ನಿಮ್ಮ ಚಿಕ್ಕ ತಮ್ಮನು ಇವನೋ?” ಎಂದು ಹೇಳಿ, “ನನ್ನ ಮಗನೇ, ದೇವರು ನಿನಗೆ ಕೃಪಾಳುವಾಗಿರಲಿ,” ಎಂದನು.</verse>
				<verse number="30">ಆಗ ಯೋಸೇಫನ ಕರುಳು ತನ್ನ ತಮ್ಮನ ಬಗ್ಗೆ ಮರುಗಿದ್ದರಿಂದ ಅವನು ಅವಸರದಲ್ಲಿ ಎದ್ದು ಅಳುವುದಕ್ಕೆ ಸ್ಥಳವನ್ನು ಹುಡುಕಿ, ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.</verse>
				<verse number="31">ತರುವಾಯ ಅವನು ಮುಖವನ್ನು ತೊಳೆದುಕೊಂಡು ಹೊರಗೆ ಬಂದನು. ಅವನು ಮನಸ್ಸನ್ನು ಬಿಗಿಹಿಡಿದುಕೊಂಡು, “ಊಟಕ್ಕೆ ಬಡಿಸಿರಿ,” ಎಂದನು.</verse>
				<verse number="32">ಆಗ ಅವರು ಯೋಸೇಫನಿಗೆ, ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡ ಇದ್ದ ಈಜಿಪ್ಟಿನವರಿಗೂ ಬೇರೆಬೇರೆಯಾಗಿ ಊಟಕ್ಕೆ ಇಟ್ಟರು. ಏಕೆಂದರೆ ಈಜಿಪ್ಟಿನವರು ಹಿಬ್ರಿಯರ ಕೂಡ ಊಟಮಾಡುತ್ತಿರಲಿಲ್ಲ. ಅದು ಈಜಿಪ್ಟಿನವರಿಗೆ ಅಸಹ್ಯವಾಗಿತ್ತು.</verse>
				<verse number="33">ಯೋಸೇಫನು ಅವರನ್ನು ಹಿರಿಯವರಿಂದ ಕಿರಿಯವನವರೆಗೆ ಅವರವರ ವಯಸ್ಸಿನ ಪ್ರಕಾರ ಕುಳಿತುಕೊಳ್ಳುವಂತೆ ಮಾಡಿದ್ದರಿಂದ, ಅವರು ತಮ್ಮತಮ್ಮೊಳಗೆ ಆಶ್ಚರ್ಯಪಟ್ಟರು.</verse>
				<verse number="34">ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರವನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಕಳುಹಿಸಿದ ಆಹಾರವು ಅವರೆಲ್ಲರ ಆಹಾರಗಳಿಗಿಂತ ಐದರಷ್ಟು ಹೆಚ್ಚಾಗಿತ್ತು ಮತ್ತು ಅವರು ಅವನ ಸಂಗಡ ಕುಡಿದು ಸಂತೋಷದಿಂದಿದ್ದರು.</verse>
			</chapter>
			<chapter number="44">
				<verse number="1">ಯೋಸೇಫನು ತನ್ನ ಮನೆಯ ಉಗ್ರಾಣಿಕನಿಗೆ, “ಈ ಮನುಷ್ಯರ ಚೀಲಗಳಲ್ಲಿ ಹೊರುವುದಕ್ಕಾಗುವಷ್ಟು ಧಾನ್ಯವನ್ನು ತುಂಬಿಸಿ, ಪ್ರತಿಯೊಬ್ಬನ ಹಣವನ್ನು ಅವನವನ ಚೀಲದ ಬಾಯಲ್ಲಿ ಇಡು.</verse>
				<verse number="2">ನನ್ನ ಬೆಳ್ಳಿಯ ಪಾತ್ರೆಯನ್ನು ಚಿಕ್ಕವನ ಚೀಲದ ಬಾಯಲ್ಲಿ ಅವನ ಧಾನ್ಯ ಹಾಗೂ ಹಣದ ಸಂಗಡ ಇಡು,” ಎಂದು ಆಜ್ಞಾಪಿಸಿದನು. ಯೋಸೇಫನು ಹೇಳಿದಂತೆಯೇ ಅವನು ಮಾಡಿದನು.</verse>
				<verse number="3">ಸೂರ್ಯೋದಯವಾದಾಗ ಆ ಮನುಷ್ಯರನ್ನು ತಮ್ಮ ಕತ್ತೆಗಳ ಸಹಿತವಾಗಿ ಕಳುಹಿಸಲಾಯಿತು.</verse>
				<verse number="4">ಅವರು ಪಟ್ಟಣವನ್ನು ಬಿಟ್ಟು ದೂರ ಹೋಗುವುದಕ್ಕಿಂತ ಮುಂಚೆ ಯೋಸೇಫನು ಮನೆಯ ಗೃಹನಿರ್ವಾಹಕನಿಗೆ, “ಆ ಮನುಷ್ಯರ ಹಿಂದೆ ಹೋಗು. ಅವರು ಸಿಕ್ಕಿದಾಗ, ‘ಏಕೆ ನೀವು ಒಳ್ಳೆಯದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಿದಿರಿ?</verse>
				<verse number="5">ಆ ಪಾತ್ರೆಯು ನನ್ನ ಒಡೆಯನು ಕುಡಿಯುವ ಪಾತ್ರೆಯಲ್ಲವೋ? ಅದರಿಂದ ನಿಜವಾಗಿಯೂ ಅವನು ದೈವೋಕ್ತಿಯನ್ನು ಹೇಳುವನಲ್ಲಾ? ನೀವು ಹೀಗೆ ಮಾಡಿದ್ದು ಕೆಟ್ಟದ್ದಾಗಿದೆ,’ ಎಂದು ಅವರಿಗೆ ಹೇಳು,” ಎಂದನು.</verse>
				<verse number="6">ಅವನು ಅವರನ್ನು ಸಂಧಿಸಿ ಈ ಮಾತುಗಳನ್ನು ಅವರಿಗೆ ಹೇಳಿದನು.</verse>
				<verse number="7">ಆಗ ಅವರು ಅವನಿಗೆ, “ನಮ್ಮ ಒಡೆಯನು ಏಕೆ ಇಂಥ ಮಾತುಗಳನ್ನಾಡುತ್ತಾನೆ? ನಿನ್ನ ದಾಸರು ಹೀಗೆ ಮಾಡುವವರಲ್ಲ.</verse>
				<verse number="8">ನಮ್ಮ ಚೀಲಗಳ ಬಾಯಲ್ಲಿ ನಮಗೆ ಸಿಕ್ಕಿದ ಹಣವನ್ನು ನಿಮಗೆ ಕೊಡುವುದಕ್ಕೆ ಕಾನಾನ್ ದೇಶದಿಂದ ತಂದೆವು. ಹೀಗಿರಲು ನಿನ್ನ ಯಜಮಾನನ ಮನೆಯೊಳಗಿಂದ ಬೆಳ್ಳಿಬಂಗಾರವನ್ನು ಹೇಗೆ ಕದ್ದುಕೊಂಡೇವು?</verse>
				<verse number="9">ಅದು ನಿನ್ನ ದಾಸರಲ್ಲಿ ಯಾರ ಹತ್ತಿರ ಸಿಕ್ಕುವುದೋ ಅವನು ಸಾಯಲಿ ಮತ್ತು ನಾವು ಸಹ ನಮ್ಮ ಒಡೆಯನಿಗೆ ದಾಸರಾಗುವೆವು,” ಎಂದರು.</verse>
				<verse number="10">ಆಗ ಅವನು, “ಈಗ ನಿಮ್ಮ ಮಾತಿನಂತೆಯೇ ಆಗಲಿ. ಯಾರ ಬಳಿಯಲ್ಲಿ ಅದು ಸಿಕ್ಕುತ್ತದೋ, ಅವನು ನನಗೆ ದಾಸನಾಗಿರಲಿ, ಆದರೆ ನೀವು ನಿರಪರಾಧಿಗಳಾಗಿರುವಿರಿ,” ಎಂದನು.</verse>
				<verse number="11">ಅದಕ್ಕೆ ಅವರು ತ್ವರೆಪಟ್ಟು, ತಮ್ಮ ತಮ್ಮ ಚೀಲಗಳನ್ನು ನೆಲಕ್ಕೆ ಇಳಿಸಿ ಅವುಗಳನ್ನು ಬಿಚ್ಚಿದರು.</verse>
				<verse number="12">ಅವರು ಹಿರಿಯನನ್ನು ಮೊದಲುಗೊಂಡು ಕಿರಿಯವನವರೆಗೆ ಶೋಧಿಸಲಾಗಿ, ಆ ಪಾತ್ರೆಯು ಬೆನ್ಯಾಮೀನನ ಚೀಲದಲ್ಲಿ ಸಿಕ್ಕಿತು.</verse>
				<verse number="13">ಆಗ ಅವರು ತಮ್ಮ ವಸ್ತ್ರಗಳನ್ನು ಹರಿದುಕೊಂಡು, ತಮ್ಮ ತಮ್ಮ ಕತ್ತೆಗಳ ಮೇಲೆ ಚೀಲಗಳನ್ನು ಹೇರಿಕೊಂಡು ಪಟ್ಟಣಕ್ಕೆ ಮರಳಿ ಬಂದರು.</verse>
				<verse number="14">ಯೆಹೂದನೂ ಅವನ ಸಹೋದರರೂ ಯೋಸೇಫನು ಇನ್ನೂ ಮನೆಯಲ್ಲಿದ್ದಾಗಲೇ, ಅವನ ಮನೆಗೆ ಬಂದು ಮುಂದೆ ಅಡ್ಡಬಿದ್ದರು.</verse>
				<verse number="15">ಆಗ ಯೋಸೇಫನು ಅವರಿಗೆ, “ನೀವು ಮಾಡಿದ ಈ ಕೆಲಸವೇನು? ನನ್ನಂಥ ಮನುಷ್ಯನು ದೈವೋಕ್ತಿಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ?” ಎಂದನು.</verse>
				<verse number="16">ಯೆಹೂದನು, “ನಾವು ನಮ್ಮ ಒಡೆಯನಿಗೆ ಏನು ಹೇಳೋಣ? ಏನು ಮಾತನಾಡೋಣ? ಹೇಗೆ ನಮ್ಮನ್ನು ನಾವು ನೀತಿವಂತರಾಗಿ ಮಾಡಿಕೊಳ್ಳೋಣ? ನಿನ್ನ ದಾಸರ ಪಾಪವನ್ನು ದೇವರು ಹೊರಪಡಿಸಿದ್ದಾರೆ. ನಾವೂ ಪಾತ್ರೆಯು ಯಾರ ಕೈಯಲ್ಲಿ ಸಿಕ್ಕಿತೋ ಅವನೂ ನನ್ನ ಒಡೆಯನಿಗೆ ದಾಸರಾಗಿದ್ದೇವೆ,” ಎಂದನು.</verse>
				<verse number="17">ಆಗ ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ, ಅವನು ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ,” ಎಂದನು.</verse>
				<verse number="18">ಯೆಹೂದನು ಅವನ ಸಮೀಪಕ್ಕೆ ಬಂದು, “ನನ್ನ ಒಡೆಯನೇ, ನನ್ನ ಒಡೆಯನ ಕಿವಿಗಳಲ್ಲಿ ಒಂದು ಮಾತು ಹೇಳುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಗಬೇಕು. ನಿನ್ನ ದಾಸನ ಮೇಲೆ ನಿನ್ನ ಕೋಪವು ಉರಿಯದೆ ಇರಲಿ. ಏಕೆಂದರೆ ನೀನು ಫರೋಹನಿಗೆ ಸಮಾನನು.</verse>
				<verse number="19">ನನ್ನ ಒಡೆಯನೇ, ‘ನಿಮಗೆ ತಂದೆಯೂ ಸಹೋದರರೂ ಇದ್ದಾರೋ,’ ಎಂದು ತನ್ನ ದಾಸರನ್ನು ಕೇಳಲು,</verse>
				<verse number="20">ನಾವು ನಮ್ಮ ಒಡೆಯನಿಗೆ, ‘ನಮಗೆ ಮುದುಕನಾದ ತಂದೆಯೂ ಅವನಿಗೆ ಮುಪ್ಪಿನಲ್ಲಿ ಹುಟ್ಟಿದ ಚಿಕ್ಕ ಮಗನೂ ಇದ್ದಾನೆ, ಅವನ ಸಹೋದರನು ಸತ್ತುಹೋಗಿದ್ದಾನೆ. ಅವನ ತಂದೆಯು ಅವನನ್ನು ಪ್ರೀತಿಸುತ್ತಾನೆ,’ ಎಂದು ಹೇಳಿದೆವು.</verse>
				<verse number="21">“ಅದಕ್ಕೆ ನೀನು ನಿನ್ನ ದಾಸರಿಗೆ, ‘ನಾನು ಅವನನ್ನು ನೋಡುವ ಹಾಗೆ, ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,’ ಎಂದು ಹೇಳಿದೆಯಲ್ಲಾ.</verse>
				<verse number="22">ನಾವು ನಮ್ಮ ಒಡೆಯನಿಗೆ, ‘ಆ ಹುಡುಗನು ನಮ್ಮ ತಂದೆಯನ್ನು ಬಿಡಕೂಡದು. ಅವನು ತಂದೆಯನ್ನು ಬಿಟ್ಟರೆ, ಅವನು ಸಾಯುವನು,’ ಎಂದು ಹೇಳಿದೆವು.</verse>
				<verse number="23">ಆಗ ನೀವು ನಿನ್ನ ದಾಸರಿಗೆ, ‘ನಿಮ್ಮ ಚಿಕ್ಕ ತಮ್ಮನು ನಿಮ್ಮ ಸಂಗಡ ಇಲ್ಲಿಗೆ ಬಾರದಿದ್ದರೆ, ಇನ್ನು ಮೇಲೆ ನನ್ನ ಮುಖವನ್ನು ನೋಡಬಾರದು,’ ಎಂದು ಹೇಳಿದೆ.</verse>
				<verse number="24">ಹೀಗಿರಲಾಗಿ ನಾವು ನಿನ್ನ ದಾಸನಾದ ನಮ್ಮ ತಂದೆಯ ಬಳಿಗೆ ಹೋದಾಗ, ನನ್ನ ಒಡೆಯನ ಮಾತುಗಳನ್ನು ಅವನಿಗೆ ತಿಳಿಸಿದೆವು.</verse>
				<verse number="25">“ನಮ್ಮ ತಂದೆಯು, ‘ನೀವು ತಿರುಗಿ ಹೋಗಿ, ನಮಗೆ ಸ್ವಲ್ಪ ಆಹಾರವನ್ನು ಕೊಂಡುಕೊಳ್ಳಿರಿ,’ ಎಂದನು.</verse>
				<verse number="26">ಆಗ ನಾವು, ‘ಹೋಗುವುದಕ್ಕಾಗದು, ನಮ್ಮ ಚಿಕ್ಕ ತಮ್ಮನು ನಮ್ಮೊಂದಿಗೆ ಇದ್ದರೆ ಮಾತ್ರ ನಾವು ಹೋಗುತ್ತೇವೆ. ಏಕೆಂದರೆ ನಮ್ಮ ಚಿಕ್ಕ ತಮ್ಮನು ನಮ್ಮ ಸಂಗಡ ಇದ್ದರೆ ಮಾತ್ರ, ಆ ಮನುಷ್ಯನ ಮುಖವನ್ನು ನಾವು ನೋಡುವುದಕ್ಕಾಗುವುದು,’ ಎಂದು ಹೇಳಿದೆವು.</verse>
				<verse number="27">“ಅದಕ್ಕೆ ನಿನ್ನ ದಾಸನಾದ ನನ್ನ ತಂದೆಯು, ‘ನನ್ನ ಹೆಂಡತಿಯು ನನಗೆ ಇಬ್ಬರು ಪುತ್ರರನ್ನು ಹೆತ್ತಳೆಂಬುದು ನಿಮಗೆ ತಿಳಿದಿದೆ.</verse>
				<verse number="28">ಒಬ್ಬನು ನನ್ನ ಬಳಿಯಿಂದ ಹೋಗಿ ಬಿಟ್ಟನು. “ಅವನು ನಿಶ್ಚಯವಾಗಿ ಕಾಡುಮೃಗದಿಂದ ಸೀಳಿ ಸತ್ತಿರಬೇಕು,” ಎಂದು ಹೇಳಿದಿರಿ. ಅವನನ್ನು ನಾನು ಈ ದಿನದವರೆಗೂ ನೋಡಲಿಲ್ಲ.</verse>
				<verse number="29">ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಅವನಿಗೂ ಕೇಡು ಬಂದರೆ, ನನ್ನ ಮುದಿ ತಲೆಯು ದುಃಖದಿಂದ ಸಮಾಧಿಗೆ ಇಳಿಯುವಂತೆ ಮಾಡುವಿರಿ,’ ಎಂದು ಹೇಳಿದನು.</verse>
				<verse number="30">“ಹೀಗಿರಲಾಗಿ ನಾನು ನಿನ್ನ ದಾಸನಾದ ನನ್ನ ತಂದೆಯ ಬಳಿಗೆ ಹೋಗುವ ಸಮಯದಲ್ಲಿ ಅವನ ಪ್ರಾಣವು ಹುಡುಗನ ಪ್ರಾಣದಲ್ಲಿ ನೆಟ್ಟಿದ್ದರಿಂದ,</verse>
				<verse number="31">ಹುಡುಗನು ನಮ್ಮ ಸಂಗಡ ಇಲ್ಲದಿರುವುದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯುವಂತೆ ಮಾಡುವರು.</verse>
				<verse number="32">ಏಕೆಂದರೆ ನಿನ್ನ ದಾಸನಾದ ನಾನು, ಆ ಹುಡುಗನಿಗೋಸ್ಕರ ನನ್ನ ತಂದೆಯ ಬಳಿಯಲ್ಲಿ ಹೊಣೆಯಾಗಿ, ‘ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ, ಎಂದೆಂದಿಗೂ ನನ್ನ ತಂದೆಗೆ ದೋಷಿಯಾಗಿರುವೆನು,’ ಎಂದು ಹೇಳಿಕೊಂಡಿದ್ದೇನೆ.</verse>
				<verse number="33">“ಹಾಗಿದ್ದಲ್ಲಿ ಆ ಹುಡುಗನ ಬದಲಾಗಿ ನಿನ್ನ ದಾಸನಾದ ನಾನು ನನ್ನ ಒಡೆಯನಿಗೆ ದಾಸನಾಗಿರುವೆನು. ಹುಡುಗನು ನನ್ನ ಸಹೋದರರ ಸಂಗಡ ಹೋಗಿಬಿಡಲಿ.</verse>
				<verse number="34">ಹುಡುಗನು ನನ್ನ ಬಳಿಯಲ್ಲಿರದೆ, ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡಬೇಕಾದೀತು,” ಎಂದನು.</verse>
			</chapter>
			<chapter number="45">
				<verse number="1">ಆಗ ಯೋಸೇಫನು ತನ್ನ ಸುತ್ತಲೂ ನಿಂತಿದ್ದವರ ಮುಂದೆ ಮನಸ್ಸನ್ನು ಬಿಗಿಹಿಡಿದುಕೊಳ್ಳಲು ಆಗಲಿಲ್ಲ. “ಎಲ್ಲರನ್ನೂ ತನ್ನ ಬಳಿಯಿಂದ ಹೊರಗೆ ಹೋಗುವಂತೆ ಮಾಡಿರಿ,” ಎಂದು ಕೂಗಿದನು. ಯೋಸೇಫನು ತನ್ನ ಸಹೋದರರಿಗೆ ತನ್ನನ್ನು ಪರಿಚಯಿಸಿಕೊಳ್ಳಲು ಹೋದಾಗ, ಅಲ್ಲಿ ಬೇರೆ ಯಾರೂ ಇರಲಿಲ್ಲ.</verse>
				<verse number="2">ಆಗ ಅವನು ತನ್ನ ಸ್ವರವೆತ್ತಿ ಅತ್ತಾಗ, ಹೊರಗಿದ್ದ ಈಜಿಪ್ಟಿನವರೂ, ಫರೋಹನ ಮನೆಯವರೂ ಕೇಳಿಸಿಕೊಂಡರು.</verse>
				<verse number="3">ಯೋಸೇಫನು ತನ್ನ ಸಹೋದರರಿಗೆ, “ನಾನು ಯೋಸೇಫನು! ನನ್ನ ತಂದೆಯು ಬದುಕಿದ್ದಾನೋ?” ಎಂದನು. ಅದಕ್ಕೆ ಅವನ ಸಹೋದರರು ಅವನ ಮುಂದೆ ಕಳವಳಗೊಂಡವರಾಗಿ, ಅವನಿಗೆ ಉತ್ತರ ಕೊಡಲಾರದೆ ಹೋದರು.</verse>
				<verse number="4">ಆಗ ಯೋಸೇಫನು ತನ್ನ ಸಹೋದರರಿಗೆ, “ನನ್ನ ಬಳಿಗೆ ಬನ್ನಿರಿ,” ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು, “ನೀವು ಈಜಿಪ್ಟಿಗೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ!</verse>
				<verse number="5">ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟುಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾರೆ.</verse>
				<verse number="6">ಏಕೆಂದರೆ ಈ ಎರಡು ವರ್ಷಗಳವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರ್ಷಗಳವರೆಗೆ ಬಿತ್ತುವುದೂ, ಕೊಯ್ಯುವುದೂ ಇರುವುದಿಲ್ಲ.</verse>
				<verse number="7">ಆದ್ದರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವುದಕ್ಕೂ, ದೊಡ್ಡ ಬರಗಾಲದಿಂದ ನಿಮ್ಮ ಪ್ರಾಣಗಳನ್ನು ಉಳಿಸುವುದಕ್ಕೂ ದೇವರು ನನ್ನನ್ನು ಇಲ್ಲಿಗೆ ಕಳುಹಿಸಿದ್ದಾರೆ.</verse>
				<verse number="8">“ಆದ್ದರಿಂದ ಈಗ ನೀವಲ್ಲ, ದೇವರು ತಾವೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾರೆ. ದೇವರು ನನ್ನನ್ನು ಫರೋಹನಿಗೆ ತಂದೆಯಾಗಿಯೂ, ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಈಜಿಪ್ಟ್ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾರೆ.</verse>
				<verse number="9">ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ, ‘ನಿನ್ನ ಮಗ ಯೋಸೇಫನನ್ನು ದೇವರು ಈಜಿಪ್ಟಿಗೆಲ್ಲಾ ಪ್ರಭುವನ್ನಾಗಿ ಮಾಡಿದ್ದಾರೆ, ತಡಮಾಡದೆ ನನ್ನ ಬಳಿಗೆ ಬೇಗ ಬಾ.</verse>
				<verse number="10">ಗೋಷೆನ್ ಪ್ರದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ದನಕುರಿಗಳೂ, ನಿನಗಿದ್ದದ್ದೆಲ್ಲವೂ ನನ್ನ ಸಮೀಪದಲ್ಲಿರಬೇಕು.</verse>
				<verse number="11">ಅಲ್ಲಿ ನಿನ್ನನ್ನು ಪೋಷಿಸುವೆನು. ಏಕೆಂದರೆ ಇನ್ನೂ ಕ್ಷಾಮದ ಐದು ವರ್ಷಗಳಿವೆ. ನಿನಗೂ, ನಿನ್ನ ಮನೆಗೂ, ನಿನಗಿರುವುದೆಲ್ಲದಕ್ಕೂ ಬಡತನವಾಗಬಾರದು’ ಎಂದು ಹೇಳಿರಿ.</verse>
				<verse number="12">“ನಿಮ್ಮ ಸಂಗಡ ಮಾತನಾಡುವುದು ನನ್ನ ಬಾಯಿಯೇ ಎಂದು ನಿಮ್ಮ ಕಣ್ಣುಗಳೂ, ನನ್ನ ಸಹೋದರ ಬೆನ್ಯಾಮೀನನ ಕಣ್ಣುಗಳೂ ನೋಡಿವೆ.</verse>
				<verse number="13">ಹೀಗಿರಲಾಗಿ ನೀವು ಈಜಿಪ್ಟ್ ದೇಶದಲ್ಲಿ ನನಗಿರುವ ಎಲ್ಲಾ ಘನತೆಯನ್ನೂ, ನೀವು ನೋಡಿದ್ದೆಲ್ಲವನ್ನೂ ನನ್ನ ತಂದೆಗೆ ತಿಳಿಸಿ, ನನ್ನ ತಂದೆಯನ್ನು ಶೀಘ್ರವಾಗಿ ಇಲ್ಲಿಗೆ ಕರೆದುಕೊಂಡು ಬನ್ನಿರಿ,” ಎಂದನು.</verse>
				<verse number="14">ಅವನು ತನ್ನ ತಮ್ಮ ಬೆನ್ಯಾಮೀನನ ಕುತ್ತಿಗೆಯನ್ನು ಅಪ್ಪಿಕೊಂಡು ಅತ್ತನು, ಬೆನ್ಯಾಮೀನನೂ ಅತ್ತನು.</verse>
				<verse number="15">ಇದಲ್ಲದೆ ತನ್ನ ಸಹೋದರರಿಗೆಲ್ಲಾ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಅತ್ತನು. ತರುವಾಯ ಅವನ ಸಹೋದರರು ಅವನ ಸಂಗಡ ಮಾತನಾಡಿದರು.</verse>
				<verse number="16">ಯೋಸೇಫನ ಸಹೋದರರು ಬಂದಿದ್ದಾರೆಂಬ ಸುದ್ದಿಯನ್ನು ಫರೋಹನ ಮನೆಯವರು ಕೇಳಿದಾಗ ಫರೋಹನಿಗೂ, ಅವನ ಸೇವಕರಿಗೂ ಅದು ಮೆಚ್ಚಿಗೆಯಾಗಿತ್ತು.</verse>
				<verse number="17">ಆಗ ಫರೋಹನು ಯೋಸೇಫನಿಗೆ, “ನಿನ್ನ ಸಹೋದರರಿಗೆ ಹೀಗೆ ಮಾಡಲು ಹೇಳು: ‘ನೀವು ನಿಮ್ಮ ವಾಹಕಪಶುಗಳ ಮೇಲೆ ವಸ್ತುಗಳನ್ನು ಹೇರಿ, ಕಾನಾನ್ ದೇಶಕ್ಕೆ ಹೋಗಿ,</verse>
				<verse number="18">ನಿಮ್ಮ ತಂದೆಯನ್ನೂ, ಕುಟುಂಬದವರನ್ನೂ ಕರೆದುಕೊಂಡು ನನ್ನ ಬಳಿಗೆ ಬನ್ನಿರಿ. ಈಜಿಪ್ಟ್ ದೇಶದ ಸುಖಸಂಪತ್ತನ್ನು ಅನುಭವಿಸಬಹುದು.’</verse>
				<verse number="19">“ಇದನ್ನು ಸಹ ನಿನ್ನ ಸಹೋದರರು ಹೇಳುವಂತೆ ನಿನಗೆ ಅಪ್ಪಣೆಯಾಗಿದೆ: ‘ಈಜಿಪ್ಟ್ ದೇಶದೊಳಗಿಂದ ನಿಮ್ಮ ಚಿಕ್ಕವರಿಗಾಗಿಯೂ, ಹೆಂಡತಿಯರಿಗಾಗಿಯೂ ಬಂಡಿಗಳನ್ನು ತೆಗೆದುಕೊಂಡುಹೋಗಿ, ನಿಮ್ಮ ತಂದೆಯನ್ನು ಕರೆದುಕೊಂಡು ಬನ್ನಿರಿ.</verse>
				<verse number="20">ನಿಮ್ಮ ಸಾಮಗ್ರಿಗಳಿಗಾಗಿ ಚಿಂತಿಸಬೇಡಿರಿ. ಈಜಿಪ್ಟ್ ದೇಶದಲ್ಲಿರುವ ಉತ್ತಮವಾದದ್ದೆಲ್ಲಾ ನಿಮ್ಮದೇ,’ ” ಎಂದನು.</verse>
				<verse number="21">ಇಸ್ರಾಯೇಲನ ಮಕ್ಕಳು ಹಾಗೆಯೇ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಯೋಸೇಫನು ಅವರಿಗೆ ಬಂಡಿಗಳನ್ನೂ, ಮಾರ್ಗಕ್ಕೋಸ್ಕರ ಆಹಾರವನ್ನೂ ಕೊಟ್ಟನು.</verse>
				<verse number="22">ಅವರೆಲ್ಲರಿಗೆ ಬದಲು ವಸ್ತ್ರಗಳನ್ನೂ, ಬೆನ್ಯಾಮೀನನಿಗೆ ಮುನ್ನೂರು ಬೆಳ್ಳಿಯ ನಾಣ್ಯಗಳನ್ನೂ, ಐದು ಬದಲು ವಸ್ತ್ರಗಳನ್ನೂ ಕೊಟ್ಟನು.</verse>
				<verse number="23">ಇದಲ್ಲದೆ ಅವನು ತನ್ನ ತಂದೆಗೆ ಹತ್ತು ಕತ್ತೆಗಳು ಹೊರುವಷ್ಟು ಈಜಿಪ್ಟಿನ ಶ್ರೇಷ್ಠವಾದವುಗಳನ್ನೂ, ಪ್ರಯಾಣಕ್ಕೋಸ್ಕರ ತಂದೆಗೆ ಹತ್ತು ಹೆಣ್ಣು ಕತ್ತೆಗಳು ಹೊರುವಷ್ಟು ಗೋಧಿ, ರೊಟ್ಟಿ, ಆಹಾರಗಳನ್ನೂ ಕಳುಹಿಸಿದನು.</verse>
				<verse number="24">ಯೋಸೇಫನು ಅವರಿಗೆ, “ಮಾರ್ಗದಲ್ಲಿ ಜಗಳವಾಡಬೇಡಿರಿ,” ಎಂದು ಹೇಳಿ ಕಳುಹಿಸಿದನು.</verse>
				<verse number="25">ಅವರು ಈಜಿಪ್ಟಿನಿಂದ ಹೊರಟುಹೋಗಿ ಕಾನಾನಿನಲ್ಲಿದ್ದ ತಮ್ಮ ತಂದೆ ಯಾಕೋಬನ ಬಳಿಗೆ ಬಂದು,</verse>
				<verse number="26">“ಯೋಸೇಫನು ಇನ್ನೂ ಜೀವದಿಂದ ಇದ್ದಾನೆ! ಅವನೇ ಈಜಿಪ್ಟ್ ದೇಶವನ್ನೆಲ್ಲಾ ಆಳುತ್ತಿದ್ದಾನೆ,” ಎಂದು ಅವನಿಗೆ ತಿಳಿಸಿದಾಗ, ಅವನು ಆಶ್ಚರ್ಯಪಟ್ಟನು, ಅವರನ್ನು ನಂಬಲಿಲ್ಲ.</verse>
				<verse number="27">ಆದರೆ ಯೋಸೇಫನು ತಮಗೆ ಹೇಳಿದ ಎಲ್ಲಾ ಮಾತುಗಳನ್ನು ಅವರು ಯಾಕೋಬನಿಗೆ ಹೇಳಿದರು. ಅವನನ್ನು ಕರೆದುಕೊಂಡು ಹೋಗುವುದಕ್ಕೆ ಯೋಸೇಫನು ಕಳುಹಿಸಿದ ರಥಗಳನ್ನು ಅವನು ನೋಡಿದಾಗ ಯಾಕೋಬನ ಆತ್ಮವು ಉಜ್ಜೀವಿಸಿತು.</verse>
				<verse number="28">ಕೊನೆಗೆ ಇಸ್ರಾಯೇಲನು, “ನನ್ನ ಮಗ ಯೋಸೇಫನು ಇನ್ನೂ ಜೀವಂತವಾಗಿದ್ದಾನೆ, ಅಷ್ಟೇ ಸಾಕು! ನಾನು ಸಾಯುವುದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುತ್ತೇನೆ,” ಎಂದನು.</verse>
			</chapter>
			<chapter number="46">
				<verse number="1">ಇಸ್ರಾಯೇಲನು ತನಗಿದ್ದದ್ದನ್ನೆಲ್ಲಾ ತೆಗೆದುಕೊಂಡು ಬೇರ್ಷೆಬಕ್ಕೆ ಬಂದು, ತನ್ನ ತಂದೆ ಇಸಾಕನ ದೇವರಿಗೆ ಬಲಿಗಳನ್ನು ಅರ್ಪಿಸಿದನು.</verse>
				<verse number="2">ದೇವರು ಇಸ್ರಾಯೇಲನಿಗೆ ರಾತ್ರಿಯ ದರ್ಶನದಲ್ಲಿ ಮಾತನಾಡಿ, “ಯಾಕೋಬನೇ, ಯಾಕೋಬನೇ,” ಎಂದರು. ಅದಕ್ಕವನು, “ಇಗೋ, ಇದ್ದೇನೆ,” ಎಂದನು.</verse>
				<verse number="3">ದೇವರು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು. ನೀನು ಈಜಿಪ್ಟಿಗೆ ಹೋಗುವುದಕ್ಕೆ ಭಯಪಡಬೇಡ. ಏಕೆಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡ ಜನಾಂಗವಾಗಮಾಡುವೆನು.</verse>
				<verse number="4">ನಾನೇ ನಿನ್ನ ಸಂಗಡ ಈಜಿಪ್ಟಿಗೆ ಹೋಗುವೆನು. ನಾನು ನಿಶ್ಚಯವಾಗಿ ನಿನ್ನನ್ನು ಕಾನಾನಿಗೆ ತಿರುಗಿ ಬರಮಾಡುವೆನು. ಯೋಸೇಫನು ನಿನ್ನ ಅಂತಿಮ ಕಾಲದಲ್ಲಿ ನೀನು ಕಣ್ಣುಮುಚ್ಚುವಾಗ ಇರುವನು,” ಎಂದನು.</verse>
				<verse number="5">ಆಗ ಯಾಕೋಬನು ಎದ್ದು ಬೇರ್ಷೆಬದಿಂದ ಹೊರಟನು. ಆಗ ಇಸ್ರಾಯೇಲರು ತಮ್ಮ ತಂದೆ ಯಾಕೋಬನನ್ನೂ, ತಮ್ಮ ಮಕ್ಕಳನ್ನೂ, ತಮ್ಮ ಹೆಂಡತಿಯರನ್ನೂ ಫರೋಹನು ಕಳುಹಿಸಿದ ರಥಗಳಲ್ಲಿ ಕೂರಿಸಿಕೊಂಡು ಹೋದರು.</verse>
				<verse number="6">ಅವರು ತಮ್ಮ ಪಶುಗಳನ್ನೂ ಕಾನಾನ್ ದೇಶದಲ್ಲಿ ತಾವು ಸಂಪಾದಿಸಿದ ತಮ್ಮ ಸಂಪತ್ತನ್ನೂ ತೆಗೆದುಕೊಂಡು ಈಜಿಪ್ಟಿಗೆ ಬಂದರು. ಯಾಕೋಬನು ತನ್ನ ಕುಟುಂಬ ಸಮೇತವಾಗಿ ಬಂದನು.</verse>
				<verse number="7">ಅವನು ತನ್ನ ಗಂಡು ಹೆಣ್ಣು ಮಕ್ಕಳನ್ನೂ, ಮೊಮ್ಮೊಕ್ಕಳನ್ನೂ, ಅಂತೂ ತನ್ನ ಇಡೀ ಕುಟುಂಬದವರೆಲ್ಲರನ್ನೂ ತನ್ನೊಂದಿಗೆ ಈಜಿಪ್ಟಿಗೆ ಕರೆದುಕೊಂಡು ಹೋದನು.</verse>
				<verse number="8">ಈಜಿಪ್ಟಿಗೆ ಬಂದ ಇಸ್ರಾಯೇಲರ ಮಕ್ಕಳು ಎಂದರೆ, ಯಾಕೋಬನ ಹಾಗೂ ಅವನ ಸಂತತಿಯರ ಹೆಸರುಗಳು: ಯಾಕೋಬನ ಚೊಚ್ಚಲ ಮಗ ರೂಬೇನನು.</verse>
				<verse number="9">ರೂಬೇನನ ಪುತ್ರರು: ಹನೋಕ್, ಪಲ್ಲೂ, ಹೆಚ್ರೋನ್ ಮತ್ತು ಕರ್ಮೀ ಎಂಬುವರು.</verse>
				<verse number="10">ಸಿಮೆಯೋನನ ಮಕ್ಕಳು: ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯಳ ಮಗನಾದ ಸೌಲ ಎಂಬುವರು.</verse>
				<verse number="11">ಲೇವಿಯ ಪುತ್ರರು: ಗೇರ್ಷೋನ್, ಕೊಹಾತ್, ಮೆರಾರೀ ಎಂಬುವರು.</verse>
				<verse number="12">ಯೆಹೂದನ ಮಕ್ಕಳು: ಏರ್, ಓನಾನ್, ಶೇಲಹ, ಪೆರೆಚ್ ಮತ್ತು ಜೆರಹ. ಆದರೆ ಏರನೂ, ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಮತ್ತು ಹಾಮೂಲ್ ಎಂಬುವರು.</verse>
				<verse number="13">ಇಸ್ಸಾಕಾರನ ಮಕ್ಕಳು: ತೋಲಾ, ಪುವ್ವಾ, ಯೋಬ್ ಮತ್ತು ಶಿಮ್ರೋನ್ ಎಂಬುವರು.</verse>
				<verse number="14">ಜೆಬುಲೂನನ ಮಕ್ಕಳು: ಸೆರೆದ್, ಏಲೋನ್, ಯಹಲೇಲ್ ಎಂಬುವರು.</verse>
				<verse number="15">ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ, ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಪುತ್ರಪುತ್ರಿಯರೆಲ್ಲಾ ಸೇರಿ ಒಟ್ಟು ಮೂವತ್ತು ಮೂರು ಮಂದಿ.</verse>
				<verse number="16">ಗಾದನ ಮಕ್ಕಳು: ಚಿಫ್ಯೋನ್, ಹಗ್ಗೀ, ಶೂನೀ, ಎಚ್ಬೋನ್, ಏರೀ, ಅರೋದೀ ಮತ್ತು ಅರೇಲೀ ಎಂಬುವರು.</verse>
				<verse number="17">ಆಶೇರನ ಮಕ್ಕಳು: ಇಮ್ನಾ, ಇಷ್ವಾ, ಇಷ್ವೀ, ಬೆರೀಯ ಮತ್ತು ಅವರ ಸಹೋದರಿಯಾದ ಸೆರಹ. ಬೆರೀಗನ ಪುತ್ರರು: ಹೆಬೆರ, ಮಲ್ಕೀಯೇಲ್ ಎಂಬುವರು.</verse>
				<verse number="18">ಲಾಬಾನನು ತನ್ನ ಮಗಳಾದ ಲೇಯಳಿಗೆ ಕೊಟ್ಟ ಜಿಲ್ಪಳ ಮಕ್ಕಳು ಇವರೇ. ಈಕೆಯಿಂದ ಯಾಕೋಬನಿಗಾದ ಮಕ್ಕಳು ಮತ್ತು ಮೊಮ್ಮಕ್ಕಳು ಒಟ್ಟು ಹದಿನಾರು ಮಂದಿ.</verse>
				<verse number="19">ಯಾಕೋಬನ ಹೆಂಡತಿಯಾದ ರಾಹೇಲಳ ಪುತ್ರರು: ಯೋಸೇಫ್, ಬೆನ್ಯಾಮೀನ್ ಎಂಬುವರು.</verse>
				<verse number="20">ಯೋಸೇಫನಿಗೆ ಈಜಿಪ್ಟ್ ದೇಶದಲ್ಲಿ ಮಕ್ಕಳು ಹುಟ್ಟಿದರು. ಓನ್ ಪಟ್ಟಣದ ಯಾಜಕನಾಗಿರುವ ಪೋಟೀಫೆರನ ಮಗಳಾದ ಆಸನತ್ ಮನಸ್ಸೆಯನ್ನೂ, ಎಫ್ರಾಯೀಮನನ್ನೂ ಅವನಿಗೆ ಹೆತ್ತಳು.</verse>
				<verse number="21">ಬೆನ್ಯಾಮೀನನ ಪುತ್ರರು: ಬೆಳ, ಬೆಕೆರ್, ಅಷ್ಬೇಲ್, ಗೇರಾ, ನಾಮಾನ್, ಏಹೀ, ರೋಷ್, ಮುಪ್ಪೀಮ್, ಹುಪ್ಪೀಮ್ ಮತ್ತು ಆರ್ದ್ ಎಂಬುವರು.</verse>
				<verse number="22">ಇವರು ಯಾಕೋಬನಿಗೆ ಹುಟ್ಟಿದ ರಾಹೇಲಳ ಪುತ್ರರು. ಎಲ್ಲರೂ ಕೂಡಿ ಹದಿನಾಲ್ಕು ಮಂದಿ.</verse>
				<verse number="23">ದಾನನ ಮಗನು: ಹುಶೀಮನು.</verse>
				<verse number="24">ನಫ್ತಾಲಿಯ ಪುತ್ರರು: ಯಹಚೇಲ, ಗೂನೀ, ಯೇಚೆರ್, ಶಿಲ್ಲೇಮ್ ಎಂಬುವರು.</verse>
				<verse number="25">ಇವರು ಲಾಬಾನನು ತನ್ನ ಮಗಳಾದ ರಾಹೇಲಳಿಗೆ ಕೊಟ್ಟಿದ್ದ ಬಿಲ್ಹಳ ಪುತ್ರರು. ಇವರನ್ನು ಆಕೆಯು ಯಾಕೋಬನಿಗೆ ಹೆತ್ತಳು. ಇವರು ಎಲ್ಲರೂ ಕೂಡಿ ಏಳುಮಂದಿ.</verse>
				<verse number="26">ಯಾಕೋಬನ ಪುತ್ರರ ಹೆಂಡತಿಯರಲ್ಲದೆ, ಯಾಕೋಬನ ಸಂಗಡ ಈಜಿಪ್ಟಿಗೆ ಹೋದವರು ಒಟ್ಟು ಅರವತ್ತಾರು ಮಂದಿ.</verse>
				<verse number="27">ಅವರಲ್ಲದೆ ಈಜಿಪ್ಟಿನಲ್ಲಿ ಯೋಸೇಫನಿಗೆ ಇಬ್ಬರು ಪುತ್ರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಈಜಿಪ್ಟಿಗೆ ಹೋದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.</verse>
				<verse number="28">ಇದಲ್ಲದೆ ಗೋಷೆನ್ ಪ್ರಾಂತಕ್ಕೆ ಮಾರ್ಗವನ್ನು ತೋರಿಸುವಂತೆ ಯಾಕೋಬನು ಯೆಹೂದನನ್ನು ತನ್ನ ಮುಂದಾಗಿ ಯೋಸೇಫನ ಬಳಿಗೆ ಕಳುಹಿಸಿದನು. ಅವರು ಗೋಷೆನ್ ಪ್ರಾಂತಕ್ಕೆ ಬಂದು ಸೇರಿದರು.</verse>
				<verse number="29">ಆಗ ಯೋಸೇಫನು ತನ್ನ ರಥವನ್ನು ಸಿದ್ಧಮಾಡಿಕೊಂಡು, ತನ್ನ ತಂದೆ ಇಸ್ರಾಯೇಲನಿಗೆ ಎದುರಾಗಿ ಗೋಷೆನಿಗೆ ಹೋದನು. ಯೋಸೇಫನು ತನ್ನ ತಂದೆಯನ್ನು ಸಂಧಿಸಿ, ಅಪ್ಪಿಕೊಂಡು, ಬಹಳ ಹೊತ್ತಿನವರೆಗೆ ಅತ್ತನು.</verse>
				<verse number="30">ಆಗ ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ಕಂಡಿದ್ದರಿಂದ ಇನ್ನು ನಾನು ಮರಣ ಹೊಂದಲು ಸಿದ್ಧನಾಗಿದ್ದೇನೆ. ನೀನು ಇನ್ನೂ ಜೀವದಿಂದ ಇದ್ದೀಯೆ,” ಎಂದನು.</verse>
				<verse number="31">ಯೋಸೇಫನು ತನ್ನ ಸಹೋದರರಿಗೂ, ತನ್ನ ತಂದೆಯ ಮನೆಯವರಿಗೂ, “ನಾನು ಹೋಗಿ ಫರೋಹನಿಗೆ, ಕಾನಾನ್ ದೇಶದಲ್ಲಿದ್ದ ನನ್ನ ಸಹೋದರರೂ, ನನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ.</verse>
				<verse number="32">ಅವರು ಕುರಿಕಾಯುವವರು, ಅವರಿಗೆ ಪಶುಗಳು ಇವೆ. ತಮ್ಮ ಕುರಿದನಗಳನ್ನೂ, ತಮಗಿದ್ದದ್ದೆಲ್ಲವನ್ನೂ ತೆಗೆದುಕೊಂಡು ಬಂದಿದ್ದಾರೆ, ಎಂದು ಹೇಳುವೆನು.</verse>
				<verse number="33">ಫರೋಹನು ನಿಮ್ಮನ್ನು ಕರೆಯಿಸಿ, ‘ನಿಮ್ಮ ಕೆಲಸವೇನು?’ ಎಂದು ಕೇಳುವನು.</verse>
				<verse number="34">ನೀವು ಅವನಿಗೆ, ‘ಚಿಕ್ಕಂದಿನಿಂದ ಇಂದಿನವರೆಗೂ ನಿನ್ನ ದಾಸರಾದ ನಾವೂ ನಮ್ಮ ಪೂರ್ವಿಕರೂ ಪಶುಗಳನ್ನು ಕಾಯುವವರಾಗಿದ್ದೇವೆ,’ ಎಂದು ಹೇಳಬೇಕು. ಏಕೆಂದರೆ ಕುರಿ ಕಾಯುವವರೆಲ್ಲಾ ಈಜಿಪ್ಟಿನವರಿಗೆ ಅಸಹ್ಯವಾಗಿದ್ದರಿಂದ, ನೀವು ಗೋಷೆನ್ ಪ್ರಾಂತದಲ್ಲಿ ವಾಸವಾಗಿರುವಂತೆ ನೇಮಿಸುವನು,” ಎಂದನು.</verse>
			</chapter>
			<chapter number="47">
				<verse number="1">ಯೋಸೇಫನು ಹೋಗಿ ಫರೋಹನಿಗೆ, “ನನ್ನ ತಂದೆಯೂ, ನನ್ನ ಸಹೋದರರೂ ತಮ್ಮ ಕುರಿದನಗಳನ್ನೂ, ತಮಗಿದ್ದ ಎಲ್ಲವುಗಳನ್ನೂ ತೆಗೆದುಕೊಂಡು ಕಾನಾನ್ ದೇಶದಿಂದ ಬಂದಿದ್ದಾರೆ. ಅವರು ಗೋಷೆನ್ ಪ್ರಾಂತದಲ್ಲಿ ಇದ್ದಾರೆ,” ಎಂದನು.</verse>
				<verse number="2">ಅವನು ತನ್ನ ಸಹೋದರರಲ್ಲಿ ಐದು ಮಂದಿಯನ್ನು ಕರೆದುಕೊಂಡು ಬಂದು ಫರೋಹನ ಮುಂದೆ ನಿಲ್ಲಿಸಿದನು.</verse>
				<verse number="3">ಫರೋಹನು ಯೋಸೇಫನ ಸಹೋದರರಿಗೆ, “ನಿಮ್ಮ ಕೆಲಸವೇನು?” ಎಂದು ಕೇಳಿದನು. ಅವರು ಫರೋಹನಿಗೆ, “ನಿನ್ನ ದಾಸರಾದ ನಾವೂ, ನಮ್ಮ ತಂದೆಯವರೂ ಕುರಿಕಾಯುವವರಾಗಿದ್ದೇವೆ.</verse>
				<verse number="4">ದೇಶದಲ್ಲಿ ಪ್ರವಾಸಮಾಡುವುದಕ್ಕಾಗಿ ಬಂದಿದ್ದೇವೆ. ಏಕೆಂದರೆ ಕಾನಾನ್ ದೇಶದಲ್ಲಿ ಕ್ಷಾಮವು ಕಠಿಣವಾಗಿರುವುದರಿಂದ, ನಿನ್ನ ದಾಸರ ಮಂದೆಗಳಿಗೆ ಹುಲ್ಲುಗಾವಲು ಇಲ್ಲ. ಹೀಗಿರುವುದರಿಂದ ನಿನ್ನ ದಾಸರು ಗೋಷೆನ್ ಪ್ರಾಂತದ ನಿವಾಸಿಗಳಾಗುವಂತೆ ಮಾಡಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇವೆ,” ಎಂದರು.</verse>
				<verse number="5">ಅದಕ್ಕೆ ಫರೋಹನು ಯೋಸೇಫನಿಗೆ, “ನಿನ್ನ ತಂದೆಯೂ, ನಿನ್ನ ಸಹೋದರರೂ ನಿನ್ನ ಬಳಿಗೆ ಬಂದಿದ್ದಾರೆ.</verse>
				<verse number="6">ಈಜಿಪ್ಟ್ ದೇಶವು ನಿನ್ನ ಮುಂದೆ ಇದೆ. ದೇಶದ ಉತ್ತಮವಾದ ಕಡೆ ನಿನ್ನ ತಂದೆಯೂ, ಸಹೋದರರೂ ವಾಸಮಾಡುವಂತೆ ಮಾಡು. ಗೋಷೆನ್ ಪ್ರಾಂತದಲ್ಲಿ ಅವರು ವಾಸವಾಗಿರಲಿ. ಅವರಲ್ಲಿ ಯಾರಾದರೂ ಸಮರ್ಥರೆಂದು ನೀನು ತಿಳಿದರೆ, ಅವರನ್ನು ನಮಗಿರುವ ಪಶುಗಳ ಮೇಲೆ ವಿಚಾರಕರನ್ನಾಗಿ ಇರಿಸು,” ಎಂದನು.</verse>
				<verse number="7">ಯೋಸೇಫನು ತನ್ನ ತಂದೆ ಯಾಕೋಬನನ್ನು ಕರೆದುಕೊಂಡು ಬಂದು, ಫರೋಹನ ಮುಂದೆ ನಿಲ್ಲಿಸಿದನು. ಯಾಕೋಬನು ಫರೋಹನನ್ನು ಆಶೀರ್ವದಿಸಿದನು.</verse>
				<verse number="8">ಫರೋಹನು ಯಾಕೋಬನಿಗೆ, “ನಿನಗೆ ಎಷ್ಟು ವರ್ಷಗಳು?” ಎಂದು ಕೇಳಿದನು.</verse>
				<verse number="9">ಯಾಕೋಬನು ಫರೋಹನಿಗೆ, “ನಾನು ಲೋಕದಲ್ಲಿ ಸಂಚಾರಮಾಡಿದ್ದು ನೂರಮೂವತ್ತು ವರುಷಗಳೇ. ನನ್ನ ವರ್ಷಗಳು ಕಡಿಮೆಯಾದರೂ ಕಠಿಣವಾದವುಗಳು ಆಗಿವೆ. ಅವು ನನ್ನ ಪಿತೃಗಳ ಪ್ರಯಾಣದ ವರ್ಷಗಳಿಗೆ ಸಮವಾಗಿಲ್ಲ,” ಎಂದನು.</verse>
				<verse number="10">ಆಗ ಯಾಕೋಬನು ಫರೋಹನನ್ನು ಆಶೀರ್ವದಿಸಿ, ಅವನಿಂದ ಬೀಳ್ಕೊಂಡನು.</verse>
				<verse number="11">ಯೋಸೇಫನು ತನ್ನ ತಂದೆಗೂ, ತನ್ನ ಸಹೋದರರಿಗೂ ನಿವಾಸವನ್ನು ಕೊಟ್ಟು, ಫರೋಹನ ಅಪ್ಪಣೆಯ ಪ್ರಕಾರ, ಅವರಿಗೆ ಈಜಿಪ್ಟ್ ದೇಶದ ಉತ್ತಮವಾದ ರಮ್ಸೇಸ್ ಸೀಮೆಯ ಸ್ವತ್ತನ್ನು ಕೊಟ್ಟನು.</verse>
				<verse number="12">ಯೋಸೇಫನು ತನ್ನ ತಂದೆಯನ್ನೂ, ತನ್ನ ಸಹೋದರರನ್ನೂ, ತನ್ನ ತಂದೆಯ ಮನೆಯವರೆಲ್ಲರನ್ನೂ ಅವರ ಮಕ್ಕಳ ಲೆಕ್ಕದ ಪ್ರಕಾರ ಆಹಾರಕೊಟ್ಟು, ಅವರನ್ನು ಸಂರಕ್ಷಿಸಿದನು.</verse>
				<verse number="13">ಆದರೆ ಬರವು ಅತಿ ಘೋರವಾಗಿದ್ದದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಈಜಿಪ್ಟ್ ದೇಶವೂ, ಕಾನಾನ್ ದೇಶವೂ ಕ್ಷಾಮದಿಂದ ಕ್ಷೀಣವಾದವು.</verse>
				<verse number="14">ಆಗ ಯೋಸೇಫನು ಈಜಿಪ್ಟ್ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಜನರು ಕೊಂಡುಕೊಂಡ ಧಾನ್ಯಕ್ಕೆ ಬದಲಾಗಿ ಕೊಟ್ಟ ಹಣವನ್ನೆಲ್ಲಾ ಕೂಡಿಸಿ, ಅದನ್ನು ಫರೋಹನ ಮನೆಗೆ ತಂದನು.</verse>
				<verse number="15">ಈಜಿಪ್ಟ್ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಹಣವು ಮುಗಿದಾಗ, ಈಜಿಪ್ಟಿನವರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮಗೆ ಆಹಾರವನ್ನು ಕೊಡು, ನಾವು ನಿನ್ನ ಮುಂದೆ ಏಕೆ ಸಾಯಬೇಕು? ಏಕೆಂದರೆ ಹಣವೆಲ್ಲಾ ತೀರಿತು,” ಎಂದರು.</verse>
				<verse number="16">ಆಗ ಯೋಸೇಫನು, “ನಿಮ್ಮ ಪಶುಗಳನ್ನು ತೆಗೆದುಕೊಂಡು ಬನ್ನಿರಿ, ಹಣ ತೀರಿದ್ದೇಯಾದರೆ, ನಿಮ್ಮ ಪಶುಗಳಿಗೆ ಬದಲಾಗಿ ಧಾನ್ಯವನ್ನು ಕೊಡುತ್ತೇನೆ,” ಎಂದನು.</verse>
				<verse number="17">ಅವರು ತಮ್ಮ ಪಶುಗಳನ್ನೆಲ್ಲಾ ಯೋಸೇಫನ ಬಳಿಗೆ ತಂದರು. ಅವುಗಳ ಬದಲಾಗಿ ಅವನು ಆಹಾರ ಧಾನ್ಯ ಕೊಟ್ಟನು. ಅವರ ಕುದುರೆಗಳನ್ನೂ ಕುರಿಗಳನ್ನೂ ಆಡುಗಳನ್ನೂ ದನಗಳನ್ನೂ ಕತ್ತೆಗಳನ್ನೂ ಬದಲಾಗಿ ತೆಗೆದುಕೊಂಡನು. ಆ ವರ್ಷ ಅವರು ಆಹಾರಕ್ಕಾಗಿ ತಮ್ಮ ಎಲ್ಲಾ ಪಶುಪ್ರಾಣಿಗಳನ್ನು ಮಾರಿಕೊಂಡರು.</verse>
				<verse number="18">ಆ ವರ್ಷವಾದ ಮೇಲೆ ಮಾರನೆಯ ವರ್ಷದಲ್ಲಿ, ಅವರು ಅವನ ಬಳಿಗೆ ಬಂದು ಅವನಿಗೆ, “ಹಣವೂ ಪಶುಗಳ ಮಂದೆಗಳೂ ನಮ್ಮ ಒಡೆಯನ ವಶವಾಗಿ ಮುಗಿದಿರುವುದರಿಂದ, ನಮ್ಮ ಶರೀರಗಳೂ, ನಮ್ಮ ಭೂಮಿಯೂ ಹೊರತು ನಮ್ಮ ಒಡೆಯನ ಮುಂದೆ ಏನೂ ಉಳಿಯಲಿಲ್ಲವೆಂಬುದನ್ನು ನಮ್ಮ ಒಡೆಯನಿಗೆ ಮರೆಮಾಡದೆ ತಿಳಿಸುತ್ತಿದ್ದೇವೆ.</verse>
				<verse number="19">ನಾವೂ, ನಮ್ಮ ಭೂಮಿಯೂ ನಿನ್ನ ಕಣ್ಣೆದುರಿಗೆ ಸಾಯುವುದು ಏಕೆ? ನಮ್ಮನ್ನೂ, ನಮ್ಮ ಭೂಮಿಯನ್ನೂ ಆಹಾರಕ್ಕಾಗಿ ಕೊಂಡುಕೋ. ಆಗ ನಾವೂ, ನಮ್ಮ ಭೂಮಿಯೂ ಫರೋಹನಿಗೆ ದಾಸರಾಗಿರುವೆವು. ನಮಗೆ ಬೀಜವನ್ನು ಕೊಡು, ಆಗ ನಾವು ಸಾಯದೆ ಬದುಕುವೆವು, ಭೂಮಿಯು ಹಾಳಾಗದೆ ಇರುವುದು,” ಎಂದರು.</verse>
				<verse number="20">ಆಗ ಯೋಸೇಫನು ಈಜಿಪ್ಟ್ ದೇಶವನ್ನೆಲ್ಲಾ ಫರೋಹನಿಗಾಗಿ ಕೊಂಡುಕೊಂಡನು. ಬರವು ಅವರಿಗೆ ಘೋರವಾಗಿದ್ದುದರಿಂದ ಈಜಿಪ್ಟನವರು ತಮ್ಮ ತಮ್ಮ ಹೊಲಗಳನ್ನು ಮಾರಿಬಿಟ್ಟರು. ಹೀಗೆ ದೇಶವು ಫರೋಹನದಾಯಿತು.</verse>
				<verse number="21">ಯೋಸೇಫನು ಈಜಿಪ್ಟ್ ದೇಶದ ಒಂದು ಮೇರೆಯಿಂದ ಇನ್ನೊಂದು ಮೇರೆಯವರೆಗೂ ಜನರನ್ನು ದಾಸರನ್ನಾಗಿ ಮಾಡಿದನು.</verse>
				<verse number="22">ಯಾಜಕರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಏಕೆಂದರೆ ಫರೋಹನು ಯಾಜಕರಿಗೆ ಭತ್ಯೆಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು, ಅವರು ಊಟಮಾಡುತ್ತಿದ್ದರು. ಆದ್ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ.</verse>
				<verse number="23">ಯೋಸೇಫನು ಜನರಿಗೆ, “ಇಂದು ನಿಮ್ಮನ್ನೂ, ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆ. ಇಲ್ಲಿ ನಿಮಗೆ ಬೀಜವಿದೆ. ನೀವು ಭೂಮಿಯಲ್ಲಿ ಬೀಜ ಬಿತ್ತಿರಿ.</verse>
				<verse number="24">ಬೆಳೆ ಬಂದಾಗ ಐದನೆಯ ಪಾಲನ್ನು ಫರೋಹನಿಗೆ ಕೊಡಬೇಕು. ಉಳಿದ ನಾಲ್ಕು ಪಾಲು ಹೊಲದ ಬೀಜಕ್ಕಾಗಿಯೂ, ನಿಮ್ಮ ಆಹಾರಕ್ಕಾಗಿಯೂ, ನಿಮ್ಮ ಮಕ್ಕಳ ಆಹಾರಕ್ಕಾಗಿಯೂ ನಿಮಗೆ ಇರಲಿ,” ಎಂದನು.</verse>
				<verse number="25">ಆಗ ಅವರು, “ನೀನೇ ನಮ್ಮನ್ನು ಬದುಕಿಸಿದ್ದೀ, ನಮ್ಮ ಒಡೆಯನ ಕಣ್ಣುಗಳ ಮುಂದೆ ನಮಗೆ ದಯೆ ದೊರಕಲಿ. ನಾವು ಫರೋಹನ ದಾಸರಾಗಿರುವೆವು,” ಎಂದರು.</verse>
				<verse number="26">ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬುದನ್ನು ಈಜಿಪ್ಟಿನ ಭೂಮಿಗೆ ಇಂದಿನವರೆಗೂ ನಿಯಮವಾಗಿ ಸ್ಥಾಪಿಸಿದನು. ಯಾಜಕರ ಭೂಮಿಯು ಮಾತ್ರ ಫರೋಹನದಾಗಲಿಲ್ಲ.</verse>
				<verse number="27">ಇಸ್ರಾಯೇಲರು ಈಜಿಪ್ಟ್ ದೇಶದ ಗೋಷೆನ್ ಪ್ರಾಂತದಲ್ಲಿ ವಾಸವಾಗಿದ್ದು, ಆಸ್ತಿಯನ್ನು ಸಂಪಾದಿಸಿ, ಬೆಳೆದು ಬಹಳವಾಗಿ ವೃದ್ಧಿಹೊಂದಿದರು.</verse>
				<verse number="28">ಇದಲ್ಲದೆ ಯಾಕೋಬನು ಈಜಿಪ್ಟ್ ದೇಶದಲ್ಲಿ ಹದಿನೇಳು ವರುಷ ಬದುಕಿದನು. ಯಾಕೋಬನು ಬದುಕಿದ ದಿನಗಳು ನೂರ ನಲ್ವತ್ತೇಳು ವರ್ಷಗಳು.</verse>
				<verse number="29">ಇಸ್ರಾಯೇಲನ ಮರಣದ ಸಮಯವು ಸಮೀಪಿಸಿದಾಗ, ಅವನು ತನ್ನ ಮಗ ಯೋಸೇಫನನ್ನು ಕರೆಯಿಸಿ ಅವನಿಗೆ, “ಈಗ ನಿನ್ನ ಸಮ್ಮುಖದಲ್ಲಿ ನಾನು ದಯೆ ಹೊಂದಿದ್ದೇಯಾದರೆ, ನಿನ್ನ ಕೈಯನ್ನು ನನ್ನ ತೊಡೆಯ ಕೆಳಗೆ ಇಟ್ಟು, ನನಗೆ ಉಪಕಾರವನ್ನೂ, ನಂಬಿಗಸ್ತಿಕೆಯನ್ನೂ ತೋರಿಸು. ಈಜಿಪ್ಟಿನಲ್ಲಿ ನನ್ನನ್ನು ಹೂಳಿಡಬೇಡ.</verse>
				<verse number="30">ನನ್ನ ತಂದೆಯ ಸಂಗಡ ನಾನು ಮಲಗಬೇಕು. ಈಜಿಪ್ಟಿನಿಂದ ನನ್ನನ್ನು ತೆಗೆದುಕೊಂಡುಹೋಗಿ, ಅವರ ಸಮಾಧಿಯ ಸ್ಥಳದಲ್ಲಿ ನನ್ನನ್ನು ಹೂಳಿಡು,” ಎಂದನು. ಅದಕ್ಕವನು, “ನಿನ್ನ ಮಾತಿನ ಪ್ರಕಾರ ನಾನು ಮಾಡುತ್ತೇನೆ,” ಎಂದನು.</verse>
				<verse number="31">ಯಾಕೋಬನು ತನಗೆ ಪ್ರಮಾಣಮಾಡು ಎಂದಾಗ ಯೋಸೇಫನು ಅವನಿಗೆ ಪ್ರಮಾಣ ಮಾಡಿದನು. ಆಗ ಇಸ್ರಾಯೇಲನು ತನ್ನ ಊರುಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.</verse>
			</chapter>
			<chapter number="48">
				<verse number="1">ಕೆಲವು ಕಾಲದ ನಂತರ ಯೋಸೇಫನಿಗೆ, “ನಿನ್ನ ತಂದೆ ಅಸ್ವಸ್ಥನಾಗಿದ್ದಾನೆ,” ಎಂಬ ಸುದ್ದಿ ಬಂದಿತು. ಆಗ ಅವನು ತನ್ನ ಇಬ್ಬರು ಪುತ್ರರಾದ ಮನಸ್ಸೆಯನ್ನೂ, ಎಫ್ರಾಯೀಮನನ್ನೂ ಕರೆದುಕೊಂಡು ತಂದೆಯ ಬಳಿಗೆ ಬಂದನು.</verse>
				<verse number="2">ಯಾಕೋಬನಿಗೆ, “ನಿನ್ನ ಮಗ ಯೋಸೇಫನು ಬಂದಿದ್ದಾನೆ,” ಎಂದು ತಿಳಿಸಿದಾಗ, ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕುಳಿತುಕೊಂಡನು.</verse>
				<verse number="3">ಆಗ ಯಾಕೋಬನು ಯೋಸೇಫನಿಗೆ, “ಸರ್ವಶಕ್ತ ದೇವರು ಕಾನಾನ್ ದೇಶದ ಲೂಜ್ ಎಂಬಲ್ಲಿ ನನಗೆ ಕಾಣಿಸಿಕೊಂಡು, ನನ್ನನ್ನು ಆಶೀರ್ವದಿಸಿದರು.</verse>
				<verse number="4">ದೇವರು ನನಗೆ, ‘ನಿನ್ನನ್ನು ಅಭಿವೃದ್ಧಿಪಡಿಸಿ, ನಿನ್ನ ಸಂತತಿಯನ್ನು ಹೆಚ್ಚಿಸುವೆನು. ಅನೇಕ ಜನಾಂಗಗಳು ನಿನ್ನಿಂದುಟಾಗುವಂತೆ ಮಾಡುವೆನು, ನಿನ್ನ ತರುವಾಯ ನಿನ್ನ ಸಂತತಿಗೂ ಈ ದೇಶವನ್ನು ಶಾಶ್ವತವಾದ ಸ್ವತ್ತನ್ನಾಗಿ ಕೊಡುತ್ತೇನೆ,’ ಎಂದು ಹೇಳಿದರು.</verse>
				<verse number="5">“ಈಗ ನಾನು ನಿನ್ನ ಬಳಿಗೆ ಈಜಿಪ್ಟಿಗೆ ಬರುವ ಮೊದಲು ಈಜಿಪ್ಟಿನಲ್ಲಿ ನಿನಗೆ ಹುಟ್ಟಿದ ಇಬ್ಬರು ಪುತ್ರರಾದ ಎಫ್ರಾಯೀಮ್ ಮನಸ್ಸೆಯರು ನನ್ನವರಾಗಿರಬೇಕು. ಅವರು ರೂಬೇನ್ ಮತ್ತು ಸಿಮೆಯೋನರಂತೆ ನನ್ನವರಾಗಿರಬೇಕು.</verse>
				<verse number="6">ಆದರೆ ಅವರ ತರುವಾಯ ನಿನ್ನಿಂದ ಹುಟ್ಟುವ ಸಂತಾನವು ನಿನ್ನದಾಗಿರಲಿ. ಅವರು ತಮ್ಮ ಸಹೋದರರ ಸೊತ್ತಿಗೆ ಬಾಧ್ಯತೆಯನ್ನು ಪಡೆದು ಅವರ ಕುಲದ ಹೆಸರನ್ನೇ ಇಟ್ಟುಕೊಳ್ಳಲಿ.</verse>
				<verse number="7">ನಾನು ಪದ್ದನ್ ಅರಾಮಿನಿಂದ ಬಂದಾಗ, ಕಾನಾನ್ ದೇಶದಲ್ಲಿ ಎಫ್ರಾತಿನಿಂದ ಸ್ವಲ್ಪ ದೂರವಾಗಿರುವಾಗ, ರಾಹೇಲಳು ಸತ್ತುಹೋದಳು. ಅಲ್ಲಿ ಅಂದರೆ, ಬೇತ್ಲೆಹೇಮ್ ಎಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಆಕೆಯನ್ನು ಸಮಾಧಿಮಾಡಿದೆನು,” ಎಂದನು.</verse>
				<verse number="8">ಆಗ ಇಸ್ರಾಯೇಲನು ಯೋಸೇಫನ ಮಕ್ಕಳನ್ನು ಕಂಡು, “ಇವರು ಯಾರು?” ಎಂದನು.</verse>
				<verse number="9">ಅದಕ್ಕೆ ಯೋಸೇಫನು ತನ್ನ ತಂದೆಗೆ, “ದೇವರು ಈ ಸ್ಥಳದಲ್ಲಿ ನನಗೆ ಕೊಟ್ಟ ನನ್ನ ಪುತ್ರರು,” ಎಂದನು. ಆಗ ಇಸ್ರಾಯೇಲನು, “ಅವರನ್ನು ನನ್ನ ಬಳಿಗೆ ಕರೆದುಕೊಂಡು ಬಾ. ನಾನು ಅವರನ್ನು ಆಶೀರ್ವದಿಸುತ್ತೇನೆ,” ಎಂದನು.</verse>
				<verse number="10">ಇಸ್ರಾಯೇಲನು ಮುದುಕನಾಗಿದ್ದದ್ದರಿಂದ, ಅವನ ಕಣ್ಣುಗಳು ಕಾಣದಷ್ಟು ಮಬ್ಬಾಗಿದ್ದವು. ಯೋಸೇಫನು ಅವರನ್ನು ಅವನ ಸಮೀಪಕ್ಕೆ ತಂದಾಗ, ಅವನು ಅವರನ್ನು ಮುದ್ದಿಟ್ಟು, ಅಪ್ಪಿಕೊಂಡನು.</verse>
				<verse number="11">ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ಕಾಣುವೆನೆಂದು ನಾನು ನೆನಸಿರಲಿಲ್ಲ. ಆದರೆ ನಿನ್ನ ಸಂತಾನವನ್ನು ಸಹ ದೇವರು ನನಗೆ ಕಾಣುವಂತೆ ಅನುಗ್ರಹಿಸಿದ್ದಾನೆ,” ಎಂದನು.</verse>
				<verse number="12">ಆಗ ಯೋಸೇಫನು ಅವರನ್ನು ಮೊಣಕಾಲುಗಳ ಬಳಿಯಿಂದ ಬರಮಾಡಿ ತಂದೆಗೆ ಅಡ್ಡಬಿದ್ದನು.</verse>
				<verse number="13">ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯೀಮನನ್ನೂ, ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ, ಅವರಿಬ್ಬರನ್ನೂ ತನ್ನ ತಂದೆಯ ಬಳಿಗೆ ತಂದನು.</verse>
				<verse number="14">ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯೀಮನ ತಲೆಯ ಮೇಲೆಯೂ, ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ, ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು.</verse>
				<verse number="15">ಆಗ ಅವನು ಯೋಸೇಫನನ್ನು ಹೀಗೆ ಆಶೀರ್ವದಿಸಿದನು, “ನನ್ನ ತಂದೆ ಅಬ್ರಹಾಮನೂ ಇಸಾಕನೂ ಯಾವ ದೇವರ ಮುಂದೆ ನಡೆದುಕೊಂಡರೋ, ಆ ದೇವರೇ ನಾನು ಹುಟ್ಟಿದಂದಿನಿಂದ ಇಂದಿನವರೆಗೆ ನನಗೆ ಕುರುಬ ಆಗಿದ್ದ ದೇವರು.</verse>
				<verse number="16">ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ಆ ದೇವರ ದೂತ, ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದಲೂ, ನನ್ನ ಪಿತೃಗಳಾದ ಅಬ್ರಹಾಮ, ಇಸಾಕರ ಹೆಸರಿನಿಂದಲೂ ಅವರು ಮುಂದುವರೆಯಲಿ. ಭೂಮಿಯ ಮೇಲೆ ಸಮೂಹವಾಗಿ ಹೆಚ್ಚಲಿ.”</verse>
				<verse number="17">ತನ್ನ ತಂದೆಯು ಎಫ್ರಾಯೀಮನ ತಲೆಯ ಮೇಲೆ ಬಲಗೈಯನ್ನು ಇಟ್ಟದ್ದನ್ನು ಯೋಸೇಫನು ಕಂಡಾಗ, ಅದು ಅವನಿಗೆ ಇಷ್ಟವಾಗಿರಲಿಲ್ಲ. ಆದ್ದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು, ಎಫ್ರಾಯೀಮನ ತಲೆಯ ಮೇಲಿಂದ ತೆಗೆದು, ಮನಸ್ಸೆಯ ತಲೆಯ ಮೇಲೆ ಇಡುವುದರಲ್ಲಿದ್ದನು.</verse>
				<verse number="18">ಯೋಸೇಫನು ತನ್ನ ತಂದೆಗೆ, “ಅಪ್ಪಾ, ಹಾಗಲ್ಲ, ಇವನೇ ಜೇಷ್ಠಪುತ್ರನು. ಇವನ ತಲೆಯ ಮೇಲೆ ಬಲಗೈ ಇಡು,” ಎಂದನು.</verse>
				<verse number="19">ಅದಕ್ಕೆ ಅವನ ತಂದೆಯು ಒಪ್ಪದೆ, “ನನಗೆ ಗೊತ್ತು. ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವುದಲ್ಲದೆ ಅವನು ದೊಡ್ಡವನಾಗುವನು. ಆದರೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತತಿಯು ಜನಾಂಗಗಳ ಸಮೂಹವಾಗುವುದು,” ಎಂದನು.</verse>
				<verse number="20">ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವದಿಸಿ, ಹೀಗೆಂದನು: “ನಿಮ್ಮ ಹೆಸರಿನಲ್ಲಿ ಇಸ್ರಾಯೇಲರು ಈ ಆಶೀರ್ವಾದವನ್ನು ಹೇಳುವರು: ‘ಎಫ್ರಾಯೀಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲಿ.’ ” ಹೀಗೆ ಹೇಳುತ್ತಾ ಯಾಕೋಬನು ಎಫ್ರಾಯೀಮನಿಗೆ ಮನಸ್ಸೆಗಿಂತಲೂ ಉನ್ನತಸ್ಥಾನವನ್ನು ಕೊಟ್ಟನು.</verse>
				<verse number="21">ಆಗ ಇಸ್ರಾಯೇಲನು ಯೋಸೇಫನಿಗೆ, “ನಾನು ಸಾಯುತ್ತೇನೆ, ಆದರೆ ದೇವರು ನಿಮ್ಮ ಸಂಗಡವಿದ್ದು, ನಿಮ್ಮನ್ನು ನಿಮ್ಮ ಪಿತೃಗಳ ದೇಶಕ್ಕೆ ಮತ್ತೆ ಸೇರಿಸುವರು.</verse>
				<verse number="22">ಇದಲ್ಲದೆ ನಾನು ನನ್ನ ಖಡ್ಗದಿಂದಲೂ ಬಿಲ್ಲಿನಿಂದಲೂ ಅಮೋರಿಯರ ಕೈಯಿಂದ ತೆಗೆದುಕೊಂಡ ಒಂದು ಹೊಲವನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ,” ಎಂದನು.</verse>
			</chapter>
			<chapter number="49">
				<verse number="1">ಆಗ ಯಾಕೋಬನು ತನ್ನ ಪುತ್ರರನ್ನು ಕರೆಯಿಸಿ ಅವರಿಗೆ, “ನೀವೆಲ್ಲರೂ ಕೂಡಿಬನ್ನಿರಿ. ಅಂತ್ಯ ದಿನಗಳಲ್ಲಿ ನಿಮಗೆ ಸಂಭವಿಸುವುದನ್ನು ನಿಮಗೆ ತಿಳಿಸುತ್ತೇನೆ.</verse>
				<verse number="2">“ಯಾಕೋಬನ ಪುತ್ರರೇ, ನೀವು ಒಟ್ಟಿಗೆ ಕೂಡಿಕೊಂಡು ಕೇಳಿರಿ, ನಿಮ್ಮ ತಂದೆ ಇಸ್ರಾಯೇಲನ ಮಾತಿಗೆ ಕಿವಿಗೊಡಿರಿ.</verse>
				<verse number="3">“ರೂಬೇನನೇ, ನೀನು ನನ್ನ ಜೇಷ್ಠಪುತ್ರನು. ನನ್ನ ಶಕ್ತಿ, ನನ್ನ ಬಲದ ಸಂಕೇತವೂ, ಗೌರವದಲ್ಲಿ ಶಕ್ತಿಯಲ್ಲಿ ಮಿತಿಮೀರಿದವನೂ ಆಗಿರುವೆ.</verse>
				<verse number="4">ನೀರಿನಂತೆ ಚಂಚಲನಾಗಿದ್ದು, ನೀನು ಶ್ರೇಷ್ಠನಾಗುವುದಿಲ್ಲ. ಏಕೆಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆಮಾಡಿದೆ, ನನ್ನ ಹಾಸಿಗೆಯನ್ನು ಏರಿದೆ.</verse>
				<verse number="5">“ಸಿಮೆಯೋನನೂ ಲೇವಿಯೂ ಸಹೋದರರು ಹಿಂಸಾಚಾರದ ಆಯುಧಗಳು.</verse>
				<verse number="6">ನನ್ನ ಮನವೇ, ಅವರ ಆಲೋಚನೆಗೆ ಒಳಪಡಬೇಡ. ನನ್ನ ಪ್ರಾಣವೇ, ಅವರ ಕೂಟಗಳಲ್ಲಿ ಸೇರಬೇಡ. ಅವರು ತಮ್ಮ ಕೋಪದಲ್ಲಿ ಮನುಷ್ಯರನ್ನು ಕೊಂದರು, ಮದದಿಂದ ಎತ್ತುಗಳನ್ನು ಊನಪಡಿಸಿದರು.</verse>
				<verse number="7">ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದ್ದು, ಅದಕ್ಕೆ ಶಾಪಗ್ರಸ್ತವಾಗಲಿ. ಯಾಕೋಬನ ಕುಟುಂಬದಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.</verse>
				<verse number="8">“ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳುವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವುದು. ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡಬೀಳುವರು.</verse>
				<verse number="9">ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಬೇಟೆಹಿಡಿದು ಮೇಲಕ್ಕೆ ಬಂದೆ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕುವವರು ಯಾರು?</verse>
				<verse number="10">ರಾಜದಂಡವನ್ನು ಹಿಡಿಯತಕ್ಕವನು ಶೀಲೋವಿನಿಂದ ಬರುವ ತನಕ, ಯೆಹೂದನ ಕೈಯಿಂದ ರಾಜದಂಡವಾಗಲೀ, ಆಡಳಿತಗಾರನ ಅಧಿಕಾರವಾಗಲೀ ಬಿಟ್ಟು ಹೋಗುವುದಿಲ್ಲ. ಎಲ್ಲಾ ಜನಾಂಗಗಳು ಅವನಿಗೆ ವಿಧೇಯವಾಗುವುವು.</verse>
				<verse number="11">ಅವನು ತನ್ನ ವಾಹನ ಪಶುವನ್ನು ದ್ರಾಕ್ಷಾಲತೆಗೆ ಕಟ್ಟುವನು. ರಾಜದ್ರಾಕ್ಷೆಗೆ ತನ್ನ ಕತ್ತೆಯನ್ನು ಬಿಗಿಯುವನು. ದ್ರಾಕ್ಷಾರಸದಲ್ಲಿ ತನ್ನ ಬಟ್ಟೆ ಒಗೆಯುವನು, ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು.</verse>
				<verse number="12">ದ್ರಾಕ್ಷಾರಸದಿಂದ ಅವನ ಕಣ್ಣುಗಳು ಕೆಂಪಾಗಿರುವವು, ಹಾಲಿನಿಂದ ಅವನ ಹಲ್ಲುಗಳು ಬಿಳುಪಾಗಿರುವವು.</verse>
				<verse number="13">“ಜೆಬುಲೂನನು ಸಮುದ್ರದ ಕರಾವಳಿಯಲ್ಲಿ ವಾಸಿಸುವನು, ಅವನಿಗೆ ಹಡಗುಗಳು ಸೇರುವ ರೇವೂ ಇರುವುದು. ಅವನ ಮೇರೆಯು ಸೀದೋನಿಗೆ ಮುಟ್ಟುವುದು.</verse>
				<verse number="14">“ಇಸ್ಸಾಕಾರನು ಕುರಿಯ ಹಟ್ಟಿಗಳ ನಡುವೆ ಮಲಗಿಕೊಳ್ಳುವ ಬಲವುಳ್ಳ ಕತ್ತೆಯಾಗಿದ್ದಾನೆ.</verse>
				<verse number="15">ವಿಶ್ರಾಂತಿಯು ಒಳ್ಳೆಯದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆ ಹೊರುವುದಕ್ಕೆ ತನ್ನ ಹೆಗಲನ್ನು ಬಗ್ಗಿಸಿ ಬಿಟ್ಟಿಯ ಕೆಲಸ ಮಾಡುವನು.</verse>
				<verse number="16">“ದಾನನು ಇಸ್ರಾಯೇಲನ ಗೋತ್ರಗಳಲ್ಲಿ ಒಂದು ಗೋತ್ರವಾಗಿ ತನ್ನ ಜನರಿಗೆ ನ್ಯಾಯತೀರಿಸುವನು.</verse>
				<verse number="17">ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ, ಹತ್ತಿದವನು ಬೋರಲು ಬೀಳುವನು.</verse>
				<verse number="18">“ಯೆಹೋವ ದೇವರೇ, ನಿಮ್ಮ ವಿಮೋಚನೆಗಾಗಿ ಕಾಯುತ್ತಿದ್ದೇನೆ.</verse>
				<verse number="19">“ಗಾದನ ಮೇಲೆ ಸೈನ್ಯವು ದಾಳಿಮಾಡುವುದು, ಕೊನೆಗೆ ಅವನೇ ಅವರನ್ನು ಓಡಿಸಿಬಿಡುವನು.</verse>
				<verse number="20">“ಆಶೇರನ ಆಹಾರವು ಕೊಬ್ಬಿದ ಆಹಾರವು. ಅವನು ಅರಸನಿಗೆ ಸವಿಯೂಟವನ್ನು ಕೊಡುವನು.</verse>
				<verse number="21">“ನಫ್ತಾಲಿ ಬಿಡುಗಡೆ ಹೊಂದಿದ ಜಿಂಕೆ, ಅವನು ಮಾತುಗಳು ಸುಂದರ ಮಕ್ಕಳ ಮಾತುಗಳಂತೆ.</verse>
				<verse number="22">“ಯೋಸೇಫನು ಫಲಭರಿತವಾದ ದ್ರಾಕ್ಷಿಬಳ್ಳಿ ಕಾಲುವೆಗಳ ಬಳಿಯಲ್ಲಿರುವ ಫಲಭರಿತ ದ್ರಾಕ್ಷಿಬಳ್ಳಿ, ಅದರ ಕೊಂಬೆಗಳು ಗೋಡೆಗಳನ್ನೇರುತ್ತವೆ.</verse>
				<verse number="23">ಸಿಟ್ಟಿನಿಂದ ಬಿಲ್ಲುಗಾರರು ಅವನ ಮೇಲೆ ಬೀಳುವರು. ವಿರೋಧದಿಂದ ಅವನ ಮೇಲೆ ಬಾಣಗಳನ್ನು ಎಸೆಯುವರು.</verse>
				<verse number="24">ಆದರೆ ಅವನ ಬಿಲ್ಲು ಸ್ಥಿರವಾಗಿ ನಿಲ್ಲುವುದು. ಅವನ ಬಲವಾದ ತೋಳುಗಳು ಚುರುಕಾಗಿ ನಿಂತವು. ಇದಕ್ಕೆ ಕಾರಣ ಯಾಕೋಬನಿಗೆ ಸರ್ವಶಕ್ತರಾಗಿರುವ ದೇವರ ಹಸ್ತವೇ; ಇದಕ್ಕೆ ಕಾರಣ ಇಸ್ರಾಯೇಲನ ಬಂಡೆಯಾಗಿರುವ ಕುರುಬ.</verse>
				<verse number="25">ಇದಕ್ಕೆ ಕಾರಣ ನಿನಗೆ ಸಹಾಯ ಮಾಡುವ ನಿನ್ನ ಪಿತೃಗಳ ದೇವರು; ನಿನ್ನನ್ನು ಸರ್ವಶಕ್ತರಾದ ದೇವರು ಆಶೀರ್ವದಿಸಲಿ. ಆ ಆಶೀರ್ವಾದಗಳು ಪರಲೋಕದವುಗಳು. ಆ ಆಶೀರ್ವಾದಗಳು ಕೆಳಗಿನಾಳದಲ್ಲಿರುವವುಗಳು. ಅವು ಎದೆಯ ಹಾಗೂ ಗರ್ಭದ ಆಶೀರ್ವಾದಗಳು.</verse>
				<verse number="26">ಪುರಾತನ ಪರ್ವತಗಳ ಆಶೀರ್ವಾದಗಳಿಗಿಂತ ನಿನ್ನ ತಂದೆಯ ಆಶೀರ್ವಾದಗಳು ಶ್ರೇಷ್ಠವಾದವುಗಳು. ಅವು ಪುರಾತನ ಶಿಖರಗಳ ಐಶ್ವರ್ಯಕ್ಕಿಂತ ಹೆಚ್ಚಿನವುಗಳು. ಇವೆಲ್ಲವೂ ಯೋಸೇಫನ ತಲೆಯ ಮೇಲೆ ಅಂದರೆ, ತನ್ನ ಸಹೋದರರಲ್ಲಿ ರಾಜಕುಮಾರನಾದವನ ಹಣೆಯ ಮೇಲಿರಲಿ.</verse>
				<verse number="27">“ಬೆನ್ಯಾಮೀನನು ಕ್ರೂರವಾದ ತೋಳದಂತಿದ್ದಾನೆ. ಬೆಳಿಗ್ಗೆ ತಿನ್ನುತ್ತಾನೆ, ಸಂಜೆ ಕೊಳ್ಳೆಯನ್ನು ಹಂಚಿಕೊಳ್ಳುತ್ತಾನೆ.”</verse>
				<verse number="28">ಇವರೆಲ್ಲಾ ಇಸ್ರಾಯೇಲಿನ ಹನ್ನೆರಡು ಗೋತ್ರಗಳು. ಅವರ ತಂದೆ ಅವರಿಗೆ ಹೇಳಿದ್ದೂ ಇದೇ. ಅವನು ಒಬ್ಬೊಬ್ಬನನ್ನೂ ಅವನಿಗೆ ತಕ್ಕ ಆಶೀರ್ವಾದದ ಪ್ರಕಾರ ಆಶೀರ್ವದಿಸಿದನು.</verse>
				<verse number="29">ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನೆಂದರೆ, “ನಾನು ನನ್ನ ಜನರೊಂದಿಗೆ ಸೇರಿಕೊಳ್ಳುತ್ತೇನೆ. ನನ್ನ ಪಿತೃಗಳ ಸಂಗಡ ಹಿತ್ತಿಯನಾದ ಎಫ್ರೋನನ ಹೊಲದಲ್ಲಿರುವ ಗವಿಯಲ್ಲಿ</verse>
				<verse number="30">ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲದಲ್ಲಿರುವಂಥ ಅಬ್ರಹಾಮನು, ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಳಿರಿ.</verse>
				<verse number="31">ಅಲ್ಲಿ ಅಬ್ರಹಾಮನನ್ನೂ, ಅವನ ಹೆಂಡತಿ ಸಾರಳನ್ನೂ ಹೂಳಿದರು. ಅಲ್ಲಿ ಇಸಾಕನನ್ನೂ, ಅವನ ಹೆಂಡತಿ ರೆಬೆಕ್ಕಳನ್ನೂ ಹೂಳಿಟ್ಟರು. ಅಲ್ಲಿ ನಾನು ಲೇಯಳನ್ನೂ ಹೂಳಿದೆನು.</verse>
				<verse number="32">ಆ ಹೊಲವೂ, ಅದರಲ್ಲಿರುವ ಗವಿಯೂ ಹಿತ್ತಿಯರಿಂದ ಕೊಂಡುಕೊಂಡದ್ದು,” ಎಂದನು.</verse>
				<verse number="33">ಯಾಕೋಬನು ತನ್ನ ಪುತ್ರರಿಗೆ ಆಜ್ಞಾಪಿಸಿದ ತರುವಾಯ, ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಪಿತೃಗಳೊಂದಿಗೆ ಸೇರಿದನು.</verse>
			</chapter>
			<chapter number="50">
				<verse number="1">ಆಗ ಯೋಸೇಫನು ತನ್ನ ತಂದೆಯ ಶವದ ಮೇಲೆ ಬಿದ್ದು, ಅವನಿಗಾಗಿ ಕಣ್ಣೀರು ಸುರಿಸುತ್ತಾ ಅವನಿಗೆ ಮುದ್ದಿಟ್ಟನು.</verse>
				<verse number="2">ಯೋಸೇಫನು ತನ್ನ ತಂದೆ ಇಸ್ರಾಯೇಲನಿಗೆ ಸುಗಂಧದ್ರವ್ಯವನ್ನು ಹಾಕಬೇಕೆಂದು ತನ್ನ ದಾಸರಾದ ವೈದ್ಯರಿಗೆ ಅಪ್ಪಣೆಕೊಟ್ಟನು.</verse>
				<verse number="3">ವೈದ್ಯರು ಇಸ್ರಾಯೇಲನಿಗೆ ನಲವತ್ತು ದಿನಗಳವರೆಗೆ ಸುಗಂಧದ್ರವ್ಯಗಳ ಲೇಪನ ಮಾಡಿದರು. ಅದಕ್ಕಾಗಿ ಅಷ್ಟು ಸಮಯ ಬೇಕಾಗಿತ್ತು. ಇದಲ್ಲದೆ ಈಜಿಪ್ಟಿನವರು ಅವನಿಗಾಗಿ ಎಪ್ಪತ್ತು ದಿವಸ ದುಃಖಪಟ್ಟರು.</verse>
				<verse number="4">ಅವನಿಗಾಗಿ ದುಃಖಿಸುವ ದಿನಗಳು ಮುಗಿದ ಮೇಲೆ ಯೋಸೇಫನು ಫರೋಹನ ಆಸ್ಥಾನದವರಿಗೆ, “ನಾನು ನಿಮ್ಮ ಕಣ್ಣುಗಳ ಮುಂದೆ ದಯೆ ಹೊಂದಿದ್ದೇಯಾದರೆ, ಫರೋಹನ ಕಿವಿಗಳಲ್ಲಿ ಈ ಮಾತು ಹೇಳಬೇಕು.</verse>
				<verse number="5">‘ನನಗೆ ನನ್ನ ತಂದೆ, “ನಾನು ಸಾಯುತ್ತೇನೆ, ನಾನು ಕಾನಾನ್ ದೇಶದಲ್ಲಿ ನನಗೋಸ್ಕರ ಅಗೆದ ನನ್ನ ಸಮಾಧಿಯಲ್ಲಿಯೇ ನನ್ನನ್ನು ಸಮಾಧಿಮಾಡಬೇಕು,” ಎಂದು ನನ್ನಿಂದ ಪ್ರಮಾಣ ಮಾಡಿಸಿದ್ದಾನೆ.’ ಹೀಗಿರುವುದರಿಂದ ನಾನು ಹೋಗಿ ನನ್ನ ತಂದೆಯನ್ನು ಹೂಳಿ, ತಿರುಗಿ ಬರುವ ಹಾಗೆ ಅಪ್ಪಣೆಯಾಗಬೇಕು,” ಎಂದನು.</verse>
				<verse number="6">ಆಗ ಫರೋಹನು, “ನಿನ್ನ ತಂದೆಯು ನಿನ್ನಿಂದ ಪ್ರಮಾಣ ಮಾಡಿಸಿದಂತೆ, ನೀನು ಹೋಗಿ ನಿನ್ನ ತಂದೆಯನ್ನು ಹೂಳಿಡು,” ಎಂದನು.</verse>
				<verse number="7">ಹೀಗೆ ಯೋಸೇಫನು ತನ್ನ ತಂದೆಯನ್ನು ಸಮಾಧಿಮಾಡುವದಕ್ಕೆ ಹೊರಟುಹೋದನು. ಅವನ ಸಂಗಡ ಫರೋಹನ ದಾಸರೆಲ್ಲರೂ ಅರಮನೆಯ ಹಿರಿಯರೆಲ್ಲರೂ ಈಜಿಪ್ಟ್ ದೇಶದ ಮುಖ್ಯಸ್ಥರೆಲ್ಲರೂ,</verse>
				<verse number="8">ಯೋಸೇಫನ ಮನೆಯವರೆಲ್ಲರೂ ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಹೋದರು. ಅವರ ಮಕ್ಕಳನ್ನೂ, ಕುರಿದನಗಳನ್ನೂ ಮಾತ್ರ ಗೋಷೆನ್ ಪ್ರಾಂತದಲ್ಲಿ ಬಿಟ್ಟರು.</verse>
				<verse number="9">ರಥಗಳೂ, ರಾಹುತರೂ ಅವನ ಸಂಗಡ ಹೊರಟು ಹೋದರು. ಸಮೂಹವು ಬಹಳ ದೊಡ್ಡದಾಗಿತ್ತು.</verse>
				<verse number="10">ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದಾಗ, ಅಲ್ಲಿ ಅಧಿಕವಾದ ಮತ್ತು ಮಹಾ ಘೋರವಾದ ಗೋಳಾಟದಿಂದ ದುಃಖಪಟ್ಟರು.</verse>
				<verse number="11">ದೇಶದ ನಿವಾಸಿಗಳಾದ ಕಾನಾನ್ಯರು ಆಟಾದ್ ಕಣದಲ್ಲಿ ಆಗುತ್ತಿದ್ದ ದುಃಖವನ್ನು ಕಂಡಾಗ, “ಇದು ಈಜಿಪ್ಟಿನವರಿಗೆ ಘೋರವಾದ ದುಃಖ,” ಎಂದು ಹೇಳಿದರು. ಆದ್ದರಿಂದ ಅದಕ್ಕೆ ಆಬೇಲ್ ಮಿಚ್ರಯೀಮ್ ಎಂದು ಹೆಸರಾಯಿತು. ಅದು ಯೊರ್ದನಿನ ಆಚೆ ಇದೆ.</verse>
				<verse number="12">ಯಾಕೋಬನು ತನ್ನ ಪುತ್ರರಿಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಮಾಡಿದರು.</verse>
				<verse number="13">ಅವನ ಪುತ್ರರು ಅವನನ್ನು ಕಾನಾನ್ ದೇಶಕ್ಕೆ ತೆಗೆದುಕೊಂಡುಹೋಗಿ, ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವಂಥ ಮಕ್ಪೇಲ ಹೊಲದ ಗವಿಯಲ್ಲಿ ಹೂಳಿದರು.</verse>
				<verse number="14">ಯೋಸೇಫನು ತನ್ನ ತಂದೆಯನ್ನು ಹೂಳಿದ ಮೇಲೆ, ತನ್ನ ಸಹೋದರರ ಸಂಗಡವೂ, ತನ್ನ ತಂದೆಯನ್ನು ಹೂಳುವುದಕ್ಕಾಗಿ ಅವನ ಸಂಗಡ ಹೋದವರೆಲ್ಲರೂ ಈಜಿಪ್ಟಿಗೆ ತಿರುಗಿ ಬಂದರು.</verse>
				<verse number="15">ತಮ್ಮ ತಂದೆ ಸತ್ತು ಹೋದ ಮೇಲೆ ಯೋಸೇಫನ ಸಹೋದರರು, “ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ, ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗಾಗಿ ನಿಶ್ಚಯವಾಗಿ ಪ್ರತೀಕಾರಮಾಡಬಹುದು,” ಎಂದುಕೊಂಡು,</verse>
				<verse number="16">ಅವರು ಒಬ್ಬ ಸೇವಕನನ್ನು ಕಳುಹಿಸಿ ಯೋಸೇಫನಿಗೆ, “ನಿನ್ನ ತಂದೆಯು ಮರಣ ಹೊಂದುವುದಕ್ಕಿಂತ ಮುಂಚೆ,</verse>
				<verse number="17">‘ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು,’ ಎಂಬುದಾಗಿ ಯೋಸೇಫನಿಗೆ ಹೇಳಿರಿ, ಎಂದು ತಿಳಿಸಿದ್ದಾನೆ. ಹೀಗಿರುವುದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ದಯಮಾಡಿ ಕ್ಷಮಿಸು,” ಎಂದು ತಿಳಿಸಿದರು. ಈ ಸಂದೇಶ ಅವನಿಗೆ ಬಂದಾಗ, ಅವನು ಅತ್ತನು.</verse>
				<verse number="18">ಆಮೇಲೆ ಅವನ ಸಹೋದರರು ಬಂದು ಅವನ ಮುಂದೆ ಅಡ್ಡಬಿದ್ದು, “ನಿನ್ನ ದಾಸರಾಗಿದ್ದೇವೆ,” ಎಂದರು.</verse>
				<verse number="19">ಯೋಸೇಫನು ಅವರಿಗೆ, “ಭಯಪಡಬೇಡಿರಿ, ನಾನು ದೇವರ ಸ್ಥಾನದಲ್ಲಿ ಇದ್ದೇನೋ?</verse>
				<verse number="20">ನೀವು ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸಿದ್ದೀರಿ, ಆದರೆ ದೇವರು ಒಳ್ಳೆಯದಕ್ಕಾಗಿಯೇ ಸಂಕಲ್ಪಿಸಿದರು. ಈಗ ಬಹುಜನರ ಪ್ರಾಣ ಉಳಿಯುವಂತೆ ನಡೆಯುತ್ತಿದೆ.</verse>
				<verse number="21">ಹೀಗಿರುವುದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ,” ಎಂದು ಹೇಳಿ, ಅವರನ್ನು ಸಂತೈಸಿ, ದಯೆಯಿಂದ ಮಾತನಾಡಿದನು.</verse>
				<verse number="22">ಹೀಗೆ ಯೋಸೇಫನೂ, ಅವನ ತಂದೆಯ ಮನೆಯವರೂ ಸಹಿತವಾಗಿ ಈಜಿಪ್ಟಿನಲ್ಲಿ ವಾಸಮಾಡಿದರು. ಯೋಸೇಫನು ನೂರಹತ್ತು ವರ್ಷ ಬದುಕಿದನು.</verse>
				<verse number="23">ಯೋಸೇಫನು ಎಫ್ರಾಯೀಮನ ಮರಿಮೊಮ್ಮಕ್ಕಳನ್ನೂ ಕಂಡನು. ಮನಸ್ಸೆಯ ಮಗ ಮಾಕೀರನ ಮಕ್ಕಳೂ ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.</verse>
				<verse number="24">ಇದಲ್ಲದೆ ಯೋಸೇಫನು ತನ್ನ ಸಹೋದರರಿಗೆ, “ನಾನು ಸತ್ತಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಿ, ಈ ದೇಶದೊಳಗಿಂದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಸೇರುವಂತೆ ಮಾಡುವರು,” ಎಂದನು.</verse>
				<verse number="25">ಯೋಸೇಫನು ಇಸ್ರಾಯೇಲನ ಮಕ್ಕಳಿಗೆ, “ದೇವರು ನಿಶ್ಚಯವಾಗಿ ನಿಮಗೆ ಸಹಾಯ ಮಾಡುವರು. ಆಗ ನನ್ನ ಎಲುಬುಗಳನ್ನು ಇಲ್ಲಿಂದ ತೆಗೆದುಕೊಂಡು ಹೋಗಬೇಕು,” ಎಂದು ಪ್ರಮಾಣ ಮಾಡಿಸಿದನು.</verse>
				<verse number="26">ಯೋಸೇಫನು ನೂರಹತ್ತು ವರ್ಷದವನಾಗಿ ಈಜಿಪ್ಟ್ ದೇಶದಲ್ಲಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ, ಈಜಿಪ್ಟಿನಲ್ಲಿ ಪೆಟ್ಟಿಗೆಯೊಳಗೆ ಇಟ್ಟರು.</verse>
			</chapter>
		</book>
		<book number="2">
			<chapter number="1">
				<verse number="1">ಯಾಕೋಬನೊಂದಿಗೆ ಈಜಿಪ್ಟಿಗೆ ತಮ್ಮ ತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲನ ಮಕ್ಕಳ ಹೆಸರುಗಳು:</verse>
				<verse number="2">ರೂಬೇನ್, ಸಿಮೆಯೋನ್, ಲೇವಿ ಮತ್ತು ಯೆಹೂದ,</verse>
				<verse number="3">ಇಸ್ಸಾಕಾರ್ ಜೆಬುಲೂನ್ ಮತ್ತು ಬೆನ್ಯಾಮೀನ್,</verse>
				<verse number="4">ದಾನ್, ನಫ್ತಾಲಿ, ಗಾದ್ ಮತ್ತು ಆಶೇರ್.</verse>
				<verse number="5">ಯಾಕೋಬನ ವಂಶಜರು ಒಟ್ಟು ಎಪ್ಪತ್ತು ಮಂದಿ ಆದರೆ ಯೋಸೇಫನು ಮೊದಲೇ ಈಜಿಪ್ಟಿನಲ್ಲಿದ್ದನು.</verse>
				<verse number="6">ಹಲವು ವರ್ಷಗಳ ಬಳಿಕ ಯೋಸೇಫನೂ ಅವನ ಸಹೋದರರೆಲ್ಲರೂ ಆ ಸಂತತಿಯವರೆಲ್ಲರೂ ಸತ್ತರು.</verse>
				<verse number="7">ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಹರಡಿಕೊಂಡು ಬಲಗೊಂಡರು, ಅದರಿಂದ ಆ ದೇಶವು ಅವರಿಂದ ತುಂಬಿತು.</verse>
				<verse number="8">ತರುವಾಯ ಯೋಸೇಫನನ್ನೇ ಅರಿಯದ ಬೇರೊಬ್ಬ ಅರಸನು, ಈಜಿಪ್ಟಿನಲ್ಲಿ ಅಧಿಕಾರಕ್ಕೆ ಬಂದನು.</verse>
				<verse number="9">ಅವನು ತನ್ನ ಜನರಿಗೆ, “ಇಸ್ರಾಯೇಲರು ನಮಗಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಮತ್ತು ಹೆಚ್ಚು ಬಲವುಳ್ಳವರಾಗಿದ್ದಾರೆ.</verse>
				<verse number="10">ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು, ನಮಗೆ ವಿರೋಧವಾಗಿ ಯುದ್ಧಮಾಡಿ, ದೇಶವನ್ನು ಬಿಟ್ಟು ಹೋಗಬಹುದು ಆದ್ದರಿಂದ ಅವರು ವೃದ್ಧಿಯಾಗದಂತೆ ಅವರೊಂದಿಗೆ ಬುದ್ಧಿವಂತಿಕೆಯಿಂದ ನಾವು ವರ್ತಿಸೋಣ,” ಎಂದನು.</verse>
				<verse number="11">ಆಗ ಅವರನ್ನು ಬಿಟ್ಟೀ ಕೆಲಸಗಳಿಂದ ಶ್ರಮಪಡಿಸುವುದಕ್ಕಾಗಿ, ಬಿಟ್ಟೀ ಕೆಲಸಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ಮತ್ತು ರಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.</verse>
				<verse number="12">ಆದರೆ ಈಜಿಪ್ಟನವರು ಅವರನ್ನು ಎಷ್ಟು ಶ್ರಮಪಡಿಸಿದರೋ, ಅಷ್ಟು ಅಧಿಕವಾಗಿ ಅವರು ಹೆಚ್ಚಿ ಹರಡಿಕೊಂಡದ್ದರಿಂದ ಈಜಿಪ್ಟಿನವರು ಇಸ್ರಾಯೇಲರ ಬಗ್ಗೆ ಹೆದರಿದವರಾದರು.</verse>
				<verse number="13">ಆದ್ದರಿಂದ ಈಜಿಪ್ಟಿನವರು ಇಸ್ರಾಯೇಲರನ್ನು ಕ್ರೂರವಾಗಿ ನಡೆಸಿಕೊಳ್ಳುತ್ತಾ ಸೇವೆ ಮಾಡಿಸಿಕೊಂಡರು.</verse>
				<verse number="14">ಮಣ್ಣು ಅಗೆಯುವ, ಇಟ್ಟಿಗೆಯನ್ನು ಮಾಡುವ ಮತ್ತು ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಈಜಿಪ್ಟಿನವರು ಅವರಿಂದ ಮಾಡಿಸಿದ ಎಲ್ಲಾ ಕೆಲಸವು ಕಠೋರವಾಗಿತ್ತು.</verse>
				<verse number="15">ಈಜಿಪ್ಟಿನ ಅರಸನು ಶಿಪ್ರಾ ಮತ್ತು ಪೂಗಾ ಎಂದು ಹೆಸರಿದ್ದ ಹಿಬ್ರಿಯ ಸೂಲಗಿತ್ತಿಯರ ಸಂಗಡ ಮಾತನಾಡಿ,</verse>
				<verse number="16">ಅವರಿಗೆ, “ನೀವು ಹಿಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವುದಕ್ಕೆ ಹೆರಿಗೆಯ ಸಮಯದಲ್ಲಿ ಅವರನ್ನು ಪರಾಂಬರಿಸುವಾಗ, ಗಂಡು ಮಗುವಾದರೆ ಅದನ್ನು ಕೊಂದುಹಾಕಿರಿ, ಹೆಣ್ಣಾದರೆ ಬದುಕಲಿ,” ಎಂದು ಹೇಳಿದ್ದನು.</verse>
				<verse number="17">ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಈಜಿಪ್ಟಿನ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು.</verse>
				<verse number="18">ಆಗ ಈಜಿಪ್ಟಿನ ಅರಸನು ಸೂಲಗಿತ್ತಿಯರನ್ನು ಕರೆಯಿಸಿ, “ಏಕೆ ಗಂಡು ಮಕ್ಕಳನ್ನು ಬದುಕಿಸಿದ್ದೀರಿ? ಇಂಥ ಕೆಲಸವನ್ನು ಏಕೆ ಮಾಡಿದಿರಿ?” ಎಂದನು.</verse>
				<verse number="19">ಸೂಲಗಿತ್ತಿಯರು ಫರೋಹನಿಗೆ, “ಹಿಬ್ರಿಯರ ಸ್ತ್ರೀಯರು ಈಜಿಪ್ಟಿನ ಸ್ತ್ರೀಯರಂತೆ ಅಲ್ಲ, ಅವರು ಚುರುಕಾಗಿದ್ದಾರೆ. ಸೂಲಗಿತ್ತಿಯರು ಅವರ ಹತ್ತಿರ ಬರುವುದಕ್ಕೆ ಮುಂಚೆಯೇ ಹೆರುತ್ತಾರೆ,” ಎಂದರು.</verse>
				<verse number="20">ಆದ್ದರಿಂದ ದೇವರು ಸೂಲಗಿತ್ತಿಯರಿಗೆ ಒಳ್ಳೆಯದನ್ನು ಮಾಡಿದರು. ಇದಲ್ಲದೆ ಇಸ್ರಾಯೇಲರು ಸಂಖ್ಯೆಯಲ್ಲೂ ಹೆಚ್ಚಾಗಿ ಬಹು ಬಲಗೊಂಡರು.</verse>
				<verse number="21">ಸೂಲಗಿತ್ತಿಯರು ದೇವರಿಗೆ ಭಯಪಟ್ಟದ್ದರಿಂದ, ದೇವರು ಅವರ ಕುಟುಂಬಕ್ಕೆ ಅಭಿವೃದ್ಧಿಯನ್ನು ಉಂಟುಮಾಡಿದರು.</verse>
				<verse number="22">ಆದರೆ ಫರೋಹನು ತನ್ನ ಎಲ್ಲಾ ಜನರಿಗೆ, “ಹುಟ್ಟುವ ಹಿಬ್ರಿಯರ ಗಂಡು ಮಕ್ಕಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಮಕ್ಕಳನ್ನೆಲ್ಲಾ ಬದುಕಿಸಬೇಕು,” ಎಂದು ಅಪ್ಪಣೆಕೊಟ್ಟನು.</verse>
			</chapter>
			<chapter number="2">
				<verse number="1">ಈ ಸಮಯದಲ್ಲಿ ಲೇವಿಯ ವಂಶದವನಾದ ಒಬ್ಬನು ಲೇವಿಯ ಸ್ತ್ರೀಯನ್ನು ಮದುವೆಯಾದನು.</verse>
				<verse number="2">ಆ ಸ್ತ್ರೀಯು ಗರ್ಭಧರಿಸಿ, ಗಂಡು ಮಗುವನ್ನು ಹೆತ್ತಳು. ಅದು ಸುಂದರವಾಗಿದ್ದುದರಿಂದ ಮೂರು ತಿಂಗಳು ಬಚ್ಚಿಟ್ಟರು.</verse>
				<verse number="3">ಆದರೆ ಅದನ್ನು ಹೆಚ್ಚುಕಾಲ ಬಚ್ಚಿಡುವುದಕ್ಕಾಗದೆ ಇದ್ದಾಗ, ಅವನಿಗಾಗಿ ಆಪಿನ ಪೆಟ್ಟಿಗೆಯನ್ನು ತೆಗೆದುಕೊಂಡು, ಜೇಡಿಮಣ್ಣನ್ನು ಮತ್ತು ರಾಳವನ್ನು ಹಚ್ಚಿ, ಕೂಸನ್ನು ಅದರಲ್ಲಿಟ್ಟು, ನೈಲ್ ನದಿಯ ಅಂಚಿನಲ್ಲಿ ಇದ್ದ ಜಂಬು ಹುಲ್ಲಿನಲ್ಲಿ ಇಟ್ಟರು.</verse>
				<verse number="4">ಕೂಸಿಗೆ ಏನಾಗುವುದೋ ಎಂದು ತಿಳಿದುಕೊಳ್ಳುವುದಕ್ಕೆ ದೂರದಲ್ಲಿ ಅದರ ಅಕ್ಕ ನಿಂತುಕೊಂಡಳು.</verse>
				<verse number="5">ಆಗ ಫರೋಹನ ಮಗಳು ನೈಲ್ ನದಿಯಲ್ಲಿ ಸ್ನಾನ ಮಾಡುವದಕ್ಕೆ ಬಂದಳು. ಆಕೆಯ ದಾಸಿಯರು ನದಿಯ ಅಂಚಿನಲ್ಲಿ ತಿರುಗಾಡುತ್ತಿದ್ದರು. ಫರೋಹನ ಮಗಳು ಜಂಬು ಹುಲ್ಲಿನಲ್ಲಿದ್ದ ಪೆಟ್ಟಿಗೆಯನ್ನು ನೋಡಿ ತನ್ನ ದಾಸಿಯನ್ನು ಕಳುಹಿಸಿ, ಅದನ್ನು ತರಿಸಿದಳು.</verse>
				<verse number="6">ಆ ಪೆಟ್ಟಿಗೆಯನ್ನು ತೆರೆದಾಗ, ಕೂಸನ್ನು ನೋಡಿದಳು. ಕೂಸು ಅಳುತ್ತಿತ್ತು. ಆಕೆಗೆ ಅದರ ಮೇಲೆ ಕನಿಕರ ಹುಟ್ಟಿತು. ಅವಳು, “ಇದು ಹಿಬ್ರಿಯರ ಮಕ್ಕಳಲ್ಲಿ ಒಂದಾಗಿರಬೇಕು,” ಎಂದು ಹೇಳಿದಳು.</verse>
				<verse number="7">ಆಗ ಮಗುವಿನ ಅಕ್ಕ ಫರೋಹನ ಮಗಳಿಗೆ, “ನಾನು ಹೋಗಿ ಈ ಕೂಸಿಗೆ ಹಾಲು ಕೊಟ್ಟು ಸಾಕುವುದಕ್ಕೆ ಹಿಬ್ರಿಯ ಸ್ತ್ರೀಯರಿಂದ ಒಬ್ಬ ದಾದಿಯನ್ನು ನಿನಗೋಸ್ಕರ ಕರೆದುಕೊಂಡು ಬರಲೋ?” ಎಂದಳು.</verse>
				<verse number="8">ಫರೋಹನ ಮಗಳು ಆಕೆಗೆ, “ಹೌದು, ಹೋಗು,” ಎಂದಳು. ಆಗ ಆ ಹುಡುಗಿಯು ಹೋಗಿ ಕೂಸಿನ ತಾಯಿಯನ್ನೇ ಕರೆದುಕೊಂಡು ಬಂದಳು.</verse>
				<verse number="9">ಫರೋಹನ ಮಗಳು ಆಕೆಗೆ, “ಈ ಮಗುವನ್ನು ತೆಗೆದುಕೊಂಡುಹೋಗಿ, ನನಗೋಸ್ಕರ ಸಾಕು. ನಾನು ನಿನಗೆ ಸಂಬಳವನ್ನು ಕೊಡುವೆನು,” ಎಂದಳು. ಆಗ ಆ ಸ್ತ್ರೀಯು ಕೂಸನ್ನು ತೆಗೆದುಕೊಂಡುಹೋಗಿ ಸಾಕಿದಳು.</verse>
				<verse number="10">ಆ ಮಗುವು ಬೆಳೆದಾಗ, ಅವನನ್ನು ಫರೋಹನ ಮಗಳ ಬಳಿಗೆ ತೆಗೆದುಕೊಂಡು ಹೋದಳು. ಅವನು ಆಕೆಗೆ ಮಗನಾದನು. ಆಕೆಯು, “ನೀರಿನೊಳಗಿಂದ ಇವನನ್ನು ಎಳೆದೆ,” ಎಂದು ಹೇಳಿ ಅವನಿಗೆ “ಮೋಶೆ” ಎಂದು ಹೆಸರಿಟ್ಟಳು.</verse>
				<verse number="11">ಹಲವು ವರ್ಷಗಳ ನಂತರ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡಿದಾಗ, ಒಬ್ಬ ಈಜಿಪ್ಟಿನವನು ತನ್ನ ಸಹೋದರರಲ್ಲಿ ಒಬ್ಬ ಹಿಬ್ರಿಯನನ್ನು ಹೊಡೆಯುವುದನ್ನು ನೋಡಿದನು.</verse>
				<verse number="12">ಅವನು ಸುತ್ತಮುತ್ತ ನೋಡಿ, ಯಾರೂ ಇಲ್ಲವೆಂದು ತಿಳಿದು ಆ ಈಜಿಪ್ಟಿನವನನ್ನು ಕೊಂದುಹಾಕಿ, ಮರಳಿನಲ್ಲಿ ಮುಚ್ಚಿಹಾಕಿದನು.</verse>
				<verse number="13">ಮರುದಿನ ಅವನು ಮತ್ತೆ ಹೊರಗೆ ಹೋದಾಗ, ಹಿಬ್ರಿಯರಾದ ಇಬ್ಬರು ಮನುಷ್ಯರು ಜಗಳವಾಡುತ್ತಿದ್ದರು. ತಪ್ಪು ಮಾಡಿದವನಿಗೆ ಮೋಶೆ, “ಏಕೆ ನಿನ್ನ ಜೊತೆಯವನನ್ನು ಹೊಡೆಯುತ್ತೀ?” ಎಂದನು.</verse>
				<verse number="14">ಅದಕ್ಕವನು, “ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿದ್ದಾರೆ? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದು ಹಾಕಬೇಕೆಂದಿದ್ದೀಯೋ?” ಎಂದನು. ಆಗ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ತಿಳಿದಿರಬೇಕು,” ಎಂದುಕೊಂಡನು.</verse>
				<verse number="15">ಫರೋಹನು ಈ ವಿಷಯವನ್ನು ಕೇಳಿದಾಗ, ಮೋಶೆಯನ್ನು ಕೊಂದುಹಾಕುವುದಕ್ಕೆ ಪ್ರಯತ್ನಿಸಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್ ದೇಶಕ್ಕೆ ವಾಸಿಸಲು ಹೋದನು. ಅಲ್ಲಿ ಒಂದು ಬಾವಿಯ ಬಳಿಯಲ್ಲಿ ಕೂತುಕೊಂಡನು.</verse>
				<verse number="16">ಮಿದ್ಯಾನಿನ ಯಾಜಕನಿಗೆ ಏಳುಮಂದಿ ಪುತ್ರಿಯರಿದ್ದರು. ಇವರು ಬಂದು ತಮ್ಮ ತಂದೆಯ ಕುರಿಮಂದೆಗಳಿಗೆ ನೀರು ಕುಡಿಸುವದಕ್ಕಾಗಿ ನೀರು ಸೇದಿ, ದೋಣಿಗಳನ್ನು ತುಂಬಿಸುತ್ತಿದ್ದರು.</verse>
				<verse number="17">ಕುರುಬರು ಬಂದು ಅವರನ್ನು ಅಲ್ಲಿಂದ ಓಡಿಸಲು, ಮೋಶೆಯು ಎದ್ದು ಬಂದು ಅವರಿಗೆ ಸಹಾಯಮಾಡಿ, ಅವರ ಕುರಿಗಳಿಗೆ ನೀರು ಕುಡಿಸಿದನು.</verse>
				<verse number="18">ಹುಡುಗಿಯರು ತಮ್ಮ ತಂದೆ ರೆಯೂವೇಲನ ಬಳಿಗೆ ಬಂದಾಗ, ಅವನು ಅವರಿಗೆ, “ಏಕೆ ಈ ಹೊತ್ತು ಬೇಗ ಬಂದಿರಿ?” ಎಂದನು.</verse>
				<verse number="19">ಅದಕ್ಕೆ ಅವರು, “ಈಜಿಪ್ಟಿನವನಾದ ಒಬ್ಬ ಮನುಷ್ಯನು ಕುರುಬರ ಕೈಯಿಂದ ನಮ್ಮನ್ನು ತಪ್ಪಿಸಿ, ನಮಗೋಸ್ಕರ ಸಾಕಾಗುವಷ್ಟು ನೀರು ಸೇದಿ, ಮಂದೆಗೆ ಕುಡಿಸಿದನು,” ಎಂದರು.</verse>
				<verse number="20">ಆಗ ರೆಯೂವೇಲನು ತನ್ನ ಪುತ್ರಿಯರಿಗೆ, “ಅವನು ಎಲ್ಲಿದ್ದಾನೆ? ಏಕೆ ಆ ಮನುಷ್ಯನನ್ನು ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ಊಟಮಾಡಲಿ,” ಎಂದನು.</verse>
				<verse number="21">ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವುದಕ್ಕೆ ಸಮ್ಮತಿಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರಳನ್ನು ಮದುವೆ ಮಾಡಿಕೊಟ್ಟನು.</verse>
				<verse number="22">ಆಕೆಯು ಅವನಿಗೆ ಮಗನನ್ನು ಹೆತ್ತಾಗ, ಮೋಶೆಯು ಅವನಿಗೆ ಗೇರ್ಷೋಮ್ ಎಂದು ಹೆಸರಿಟ್ಟನು ಏಕೆಂದರೆ ಅವನು, “ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ,” ಎಂದನು.</verse>
				<verse number="23">ಹೀಗೆ ಬಹಳ ದಿನಗಳಾದ ಮೇಲೆ ಈಜಿಪ್ಟಿನ ಅರಸನು ಸತ್ತನು. ಇಸ್ರಾಯೇಲರು ದಾಸತ್ವದ ಕಾರಣದಿಂದ ನರಳಾಡುತ್ತಾ ಮೊರೆಯಿಡುತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಮುಟ್ಟಿತು.</verse>
				<verse number="24">ದೇವರು ಅವರ ನರಳಾಟವನ್ನು ಕೇಳಿದಾಗ, ಅವರು ಅಬ್ರಹಾಮ, ಇಸಾಕ ಮತ್ತು ಯಾಕೋಬನ ಸಂಗಡ ತಾವು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡರು.</verse>
				<verse number="25">ದೇವರು ಇಸ್ರಾಯೇಲರನ್ನು ನೋಡಿ ಅವರಲ್ಲಿ ಕನಿಕರಗೊಂಡರು.</verse>
			</chapter>
			<chapter number="3">
				<verse number="1">ಮೋಶೆಯು ತನ್ನ ಮಾವನೂ ಮಿದ್ಯಾನಿನ ಯಾಜಕನೂ ಆದ ಇತ್ರೋವನ ಮಂದೆಯನ್ನು ಮೇಯಿಸುತ್ತಿದ್ದನು. ಮರುಭೂಮಿಯ ಹಿಂಭಾಗಕ್ಕೆ ನಡೆಸಿಕೊಂಡು ಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.</verse>
				<verse number="2">ಆಗ ಯೆಹೋವ ದೇವರ ದೂತನು ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು. ಮೋಶೆಯು ನೋಡಿದಾಗ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು ಆದಾಗ್ಯೂ ಪೊದೆಯು ಸುಟ್ಟು ಹೋಗಲಿಲ್ಲ.</verse>
				<verse number="3">ಆಗ ಮೋಶೆಯು, “ನಾನು ಹೋಗಿ ಆ ವಿಚಿತ್ರ ನೋಟವನ್ನೂ ಪೊದೆಯು ಏಕೆ ಸುಟ್ಟುಹೋಗಲಿಲ್ಲವೆಂಬುದನ್ನೂ ನೋಡುವೆನು,” ಎಂದುಕೊಂಡನು.</verse>
				<verse number="4">ಅವನು ನೋಡುವುದಕ್ಕೆ ಹತ್ತಿರ ಬರುವುದನ್ನು ಯೆಹೋವ ದೇವರು ನೋಡಿದಾಗ, ದೇವರು ಪೊದೆಯೊಳಗಿಂದ ಅವನಿಗೆ, “ಮೋಶೇ, ಮೋಶೇ,” ಎಂದು ಕರೆದರು. ಆಗ ಅವನು, “ನಾನು ಇಲ್ಲಿ ಇದ್ದೇನೆ,” ಎಂದನು.</verse>
				<verse number="5">ಆಗ ದೇವರು ಅವನಿಗೆ, “ಇಲ್ಲಿ ಸಮೀಪಕ್ಕೆ ಬರಬೇಡ, ನಿನ್ನ ಪಾದರಕ್ಷೆಗಳನ್ನು ತೆಗೆದಿಡು. ನೀನು ನಿಂತಿರುವ ಸ್ಥಳ ಪರಿಶುದ್ಧ ಭೂಮಿ,” ಎಂದರು.</verse>
				<verse number="6">ಇದಲ್ಲದೆ ಮೋಶೆಗೆ, “ನಾನು ನಿನ್ನ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿದ್ದೇನೆ,” ಎಂದು ಹೇಳಿದರು. ಮೋಶೆಯು ದೇವರ ಕಡೆ ದೃಷ್ಟಿ ಇಡುವುದಕ್ಕೆ ಭಯಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.</verse>
				<verse number="7">ಆಗ ಯೆಹೋವ ದೇವರು, “ಈಜಿಪ್ಟಿನಲ್ಲಿರುವ ನನ್ನ ಜನರ ವ್ಯಥೆಯನ್ನು ವಾಸ್ತವವಾಗಿಯೂ ಕಂಡಿದ್ದೇನೆ. ಬಿಟ್ಟೀ ಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.</verse>
				<verse number="8">ಆದಕಾರಣ ಅವರನ್ನು ಈಜಿಪ್ಟನವರ ಕೈಯೊಳಗಿಂದ ಬಿಡುಗಡೆ ಮಾಡುವುದಕ್ಕೆ ಬಂದಿದ್ದೇನೆ. ನಾನು ಅವರನ್ನು ಆ ದೇಶದಿಂದ ಬಿಡಿಸಿ, ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.</verse>
				<verse number="9">ಈಗ ಇಸ್ರಾಯೇಲರ ಕೂಗು ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ.</verse>
				<verse number="10">ಆದ್ದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲರಾದ ನನ್ನ ಜನರನ್ನು ನೀನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಬೇಕು,” ಎಂದರು.</verse>
				<verse number="11">ಆಗ ಮೋಶೆಯು ದೇವರಿಗೆ, “ಫರೋಹನ ಬಳಿಗೆ ಹೋಗಿ, ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಹೊರಗೆ ತರುವುದಕ್ಕೆ ನಾನು ಎಷ್ಟರವನು?” ಎಂದನು.</verse>
				<verse number="12">ಆಗ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ಜನರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದ ಮೇಲೆ ದೇವರಾದ ನನ್ನನ್ನು ಆರಾಧಿಸುವಿರಿ. ನಾನು ನಿನ್ನನ್ನು ಕಳುಹಿಸಿದವನು ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.</verse>
				<verse number="13">ಅದಕ್ಕೆ ಮೋಶೆಯು ದೇವರಿಗೆ, “ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪಿತೃಗಳ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಹೇಳುವಾಗ ಅವರು ನನಗೆ, ‘ಅವರ ಹೆಸರು ಏನು?’ ಎಂದು ಕೇಳಿದರೆ, ನಾನು ಅವರಿಗೆ ಏನು ಹೇಳಬೇಕು?” ಎಂದನು.</verse>
				<verse number="14">ಆಗ ದೇವರು ಮೋಶೆಗೆ, “ಇರುವಾತನೇ ಆಗಿದ್ದೇನೆ. ‘ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಇಸ್ರಾಯೇಲರಿಗೆ ಹೇಳಬೇಕು,” ಎಂದರು.</verse>
				<verse number="15">ಮತ್ತೆ ದೇವರು ಮೋಶೆಗೆ, “ ‘ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಇಸ್ರಾಯೇಲರಿಗೆ ಹೇಳಬೇಕು, “ಇದೇ ಯುಗಯುಗಕ್ಕೆ ನನ್ನ ಹೆಸರೂ, ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು.</verse>
				<verse number="16">“ನೀನು ಹೋಗಿ ಇಸ್ರಾಯೇಲ್ ಹಿರಿಯರನ್ನು ಕೂಡಿಸಿ ಅವರಿಗೆ, ‘ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವ ದೇವರು ನನಗೆ ಕಾಣಿಸಿಕೊಂಡು ಹೀಗೆಂದಿದ್ದಾರೆ: ನಾನು ನಿಮ್ಮನ್ನೂ ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲವನ್ನೂ ನಿಶ್ಚಯವಾಗಿ ನೋಡಿದ್ದೇನೆ.</verse>
				<verse number="17">ಈಜಿಪ್ಟಿನ ವ್ಯಥೆಯಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ಇರುವ ಹಾಲು ಜೇನು ಹರಿಯುವ ದೇಶಕ್ಕೆ ಬರಮಾಡುವೆನೆಂದು ವಾಗ್ದಾನ ಮಾಡಿದ್ದೇನೆ,’ ಎಂದು ಅವರಿಗೆ ತಿಳಿಸು.</verse>
				<verse number="18">“ಇಸ್ರಾಯೇಲರ ಹಿರಿಯರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಜನರ ಹಿರಿಯರ ಸಹಿತವಾಗಿ ಈಜಿಪ್ಟಿನ ಅರಸನ ಬಳಿಗೆ ಹೋಗಿ ಅವನಿಗೆ, ‘ಹಿಬ್ರಿಯರ ದೇವರಾಗಿರುವ ಯೆಹೋವ ದೇವರು ನಮಗೆ ಪ್ರತ್ಯಕ್ಷನಾಗಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞಮಾಡಬೇಕಾಗಿದೆ. ಅದಕ್ಕಾಗಿ ನಮ್ಮನ್ನು ಬಿಡು ಎಂದು ಬೇಡಿಕೊಳ್ಳುತ್ತೇವೆ,’ ಎಂದು ಹೇಳಬೇಕು.</verse>
				<verse number="19">ಆದರೂ ಈಜಿಪ್ಟಿನ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಹೋಗಗೊಡಿಸುವುದಿಲ್ಲ ಎಂದು ನನಗೆ ನಿಶ್ಚಯವಾಗಿ ತಿಳಿದಿದೆ.</verse>
				<verse number="20">ಹೀಗಿರುವುದರಿಂದ ನನ್ನ ಕೈಯನ್ನು ಚಾಚಿ ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿ, ನಾನು ಅದನ್ನು ನಾನಾ ವಿಧವಾಗಿ ಬಾಧಿಸುವೆನು. ತರುವಾಯ ಅವನು ನಿಮ್ಮನ್ನು ಕಳುಹಿಸಿಬಿಡುವನು.</verse>
				<verse number="21">“ಇದಲ್ಲದೆ ಈ ಜನರಿಗೆ ಈಜಿಪ್ಟಿನವರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವುದಿಲ್ಲ.</verse>
				<verse number="22">ಆದರೆ ಪ್ರತಿ ಸ್ತ್ರೀಯು ತನ್ನ ಮನೆಯಲ್ಲಿ ಇಳಿದುಕೊಂಡಿರುವ ಸ್ತ್ರೀಯಿಂದಲೂ ನೆರೆಯವಳಿಂದಲೂ ಬೆಳ್ಳಿಬಂಗಾರದ ಒಡವೆಗಳನ್ನು ಮತ್ತು ವಸ್ತ್ರಗಳನ್ನು ಕೇಳಿಕೊಳ್ಳಲಿ. ಅವುಗಳನ್ನು ನಿಮ್ಮ ಪುತ್ರಪುತ್ರಿಯರ ಮೇಲೆ ಹಾಕಿರಿ. ಹೀಗೆ ನೀವು ಈಜಿಪ್ಟಿನವರನ್ನು ಸೂರೆಮಾಡುವಿರಿ,” ಎಂದರು.</verse>
			</chapter>
			<chapter number="4">
				<verse number="1">ಮೋಶೆಯು ಉತ್ತರವಾಗಿ, “ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ‘ಯೆಹೋವ ದೇವರು ನಿನಗೆ ಕಾಣಿಸಿಕೊಂಡೇ ಇಲ್ಲ,’ ಎಂದು ಹೇಳಬಹುದು,” ಎಂದನು.</verse>
				<verse number="2">ಯೆಹೋವ ದೇವರು ಅವನಿಗೆ, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದರು. ಅವನು, “ಕೋಲು,” ಎಂದನು.</verse>
				<verse number="3">ಯೆಹೋವ ದೇವರು ಅವನಿಗೆ, “ಅದನ್ನು ನೆಲದ ಮೇಲೆ ಬಿಸಾಡು,” ಎಂದರು. ಅವನು ಅದನ್ನು ನೆಲದ ಮೇಲೆ ಬಿಸಾಡಿದನು. ಆಗ ಅದು ಸರ್ಪವಾಯಿತು. ಮೋಶೆ ಅಲ್ಲಿಂದ ಓಡಿಹೋದನು.</verse>
				<verse number="4">ಯೆಹೋವ ದೇವರು ಮೋಶೆಗೆ, “ನಿನ್ನ ಕೈಚಾಚಿ, ಅದರ ಬಾಲವನ್ನು ಹಿಡಿ,” ಎಂದಾಗ, ಅವನು ಕೈಚಾಚಿ ಅದನ್ನು ಹಿಡಿದ ಕೂಡಲೇ, ಅದು ಅವನ ಕೈಯಲ್ಲಿ ಕೋಲಾಯಿತು.</verse>
				<verse number="5">ಆಗ ಯೆಹೋವ ದೇವರು ಅವನಿಗೆ, “ಇದರಿಂದ ಆ ಜನರು ತಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗೂ ಯಾಕೋಬರ ದೇವರಾಗಿರುವ ಯೆಹೋವ ದೇವರು ನಿನಗೆ ಪ್ರಕಟವಾಗಿದ್ದು ನಿಜ ಎಂಬುದನ್ನು ನಂಬುವರು,” ಎಂದರು.</verse>
				<verse number="6">ಇದಲ್ಲದೆ ಯೆಹೋವ ದೇವರು ಅವನ ಸಂಗಡ ಇನ್ನೂ ಮಾತನಾಡಿ, “ನಿನ್ನ ಕೈಯನ್ನು ನಿನ್ನ ಉಡಿಯಲ್ಲಿ ಇಟ್ಟುಕೋ,” ಎಂದಾಗ, ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರಗೆ ತೆಗೆದನು. ಇಗೋ, ಅವನ ಕೈ ಕುಷ್ಠದಿಂದ ಹಿಮದಂತೆ ಆಗಿತ್ತು.</verse>
				<verse number="7">ದೇವರು ಅವನಿಗೆ, “ನಿನ್ನ ಕೈಯನ್ನು ಉಡಿಯಲ್ಲಿ ಹಾಕು,” ಎಂದಾಗ, ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ, ಉಡಿಯಿಂದ ಹೊರಗೆ ತೆಗೆದಾಗ, ಅದು ಅವನ ಉಳಿದ ಮೈಯಂತೆ ಆಗಿತ್ತು.</verse>
				<verse number="8">ಆಗ ಯೆಹೋವ ದೇವರು, “ಜನರು ನಿನ್ನನ್ನು ನಂಬದೆ ಮೊದಲನೆಯ ಸೂಚಕಕಾರ್ಯವನ್ನು ಗಮನಿಸದೆ ಹೋದರೂ, ಎರಡನೆಯ ಸೂಚಕಕಾರ್ಯವನ್ನು ನೋಡಿ ನಂಬುವರು.</verse>
				<verse number="9">ಆ ಎರಡೂ ಸೂಚಕಕಾರ್ಯಗಳನ್ನು ಅವರು ನಂಬದೆ, ನಿನ್ನ ಮಾತನ್ನು ಕೇಳದೆ ಹೋದರೆ, ನೀನು ನೈಲ್ ನದಿಯ ನೀರನ್ನು ತೆಗೆದು, ಒಣಗಿದ ನೆಲದ ಮೇಲೆ ಸುರಿಯಬೇಕು. ಆಗ ನೀನು ತೆಗೆದ ನದಿಯ ನೀರು ಒಣಗಿದ ನೆಲದ ಮೇಲೆ ರಕ್ತವಾಗುವುದು,” ಎಂದರು.</verse>
				<verse number="10">ಮೋಶೆಯು ಯೆಹೋವ ದೇವರಿಗೆ, “ಸ್ವಾಮಿ, ನನ್ನನ್ನು ಕ್ಷಮಿಸಿರಿ, ನಾನು ಮೊದಲಿನಿಂದಲೂ ನೀವು ನಿಮ್ಮ ದಾಸನ ಸಂಗಡ ಮಾತನಾಡಿದಂದಿನಿಂದಲೂ ವಾಕ್ಚಾತುರ್ಯವಿಲ್ಲದವನು. ನನ್ನ ಮಾತೂ ನಾಲಿಗೆಯೂ ಮಂದವಾಗಿವೆ,” ಎಂದನು.</verse>
				<verse number="11">ಅದಕ್ಕೆ ಯೆಹೋವ ದೇವರು ಅವನಿಗೆ, “ಮನುಷ್ಯರಿಗೆ ಬಾಯಿ ಕೊಟ್ಟಾತನೂ ಯಾರು? ಮೂಕರನ್ನೂ ಕಿವುಡರನ್ನೂ ಮಾಡಿದಾತನೂ ಯಾರು? ದೃಷ್ಟಿಯುಳ್ಳವರನ್ನೂ ದೃಷ್ಟಿಯಿಲ್ಲದವರನ್ನೂ ಮಾಡಿದಾತನೂ ಯಾರು? ಯೆಹೋವ ದೇವರಾದ ನಾನೇ ಅಲ್ಲವೋ?</verse>
				<verse number="12">ಹಾಗಾದರೆ ಈಗ ಹೋಗು, ನಾನೇ ನಿನ್ನ ಸಂಗಡವಿದ್ದು, ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು,” ಎಂದರು.</verse>
				<verse number="13">ಅದಕ್ಕೆ ಮೋಶೆಯು, “ಸ್ವಾಮಿ, ನೀವು ಬೇರೊಬ್ಬನನ್ನು ಕಳುಹಿಸಿರಿ, ಎಂದು ಬೇಡುತ್ತೇನೆ,” ಎಂದನು.</verse>
				<verse number="14">ಯೆಹೋವ ದೇವರು ಮೋಶೆಯ ಮೇಲೆ ಬೇಸರಗೊಂಡು, “ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡಬಲ್ಲನೆಂದು ನನಗೆ ಗೊತ್ತಿದೆ. ಅವನು ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ. ಅವನು ನಿನ್ನನ್ನು ಕಂಡು, ತನ್ನ ಹೃದಯದಲ್ಲಿ ಆನಂದಿಸುವನು.</verse>
				<verse number="15">ಅವನ ಸಂಗಡ ನೀನು ಮಾತನಾಡಿ, ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಂದಲೂ ಅವನ ಬಾಯಿಂದಲೂ ನಾನೇ ಮಾತನಾಡಿ ನೀವು ಮಾಡಬೇಕಾದುದನ್ನು ಕಲಿಸುವೆನು.</verse>
				<verse number="16">ಅವನು ನಿನ್ನ ಪರವಾಗಿ ಜನರ ಸಂಗಡ ಮಾತನಾಡುವನು. ಅವನು ನಿನಗೆ ಬಾಯಿಯಾಗಿರುವನು, ನೀನು ಅವನಿಗೆ ದೇವರಂತಿರುವಿ.</verse>
				<verse number="17">ಆದರೆ ಈ ಕೋಲನ್ನು ನಿನ್ನ ಕೈಯಲ್ಲಿ ತೆಗೆದುಕೊಳ್ಳಬೇಕು. ಇದರಿಂದಲೇ ನೀನು ಸೂಚಕಕಾರ್ಯಗಳನ್ನು ಮಾಡುವೆ,” ಎಂದರು.</verse>
				<verse number="18">ಇದಾದ ಮೇಲೆ ಮೋಶೆಯು ತನ್ನ ಮಾವನಾದ ಇತ್ರೋವನ ಬಳಿಗೆ ಬಂದು ಅವನಿಗೆ, “ಈಜಿಪ್ಟಿನಲ್ಲಿರುವ ನನ್ನ ಸಹೋದರರ ಬಳಿಗೆ ಹಿಂದಿರುಗಿ ಹೋಗಿ, ಅವರು ಇನ್ನೂ ಜೀವದಿಂದ ಇದ್ದಾರೋ ಎಂಬುದನ್ನು ನೋಡುವೆನು,” ಎಂದನು. ಇತ್ರೋವನು ಮೋಶೆಗೆ, “ಸಮಾಧಾನದಿಂದ ಹೋಗು,” ಎಂದನು.</verse>
				<verse number="19">ಯೆಹೋವ ದೇವರು ಮಿದ್ಯಾನಿನಲ್ಲಿ ಮೋಶೆಗೆ, “ಈಜಿಪ್ಟಿಗೆ ಹಿಂದಿರುಗಿ ಹೋಗು. ಏಕೆಂದರೆ ನಿನ್ನನ್ನು ಕೊಲ್ಲಬೇಕೆಂದಿದ್ದ ಜನರೆಲ್ಲಾ ಸತ್ತಿದ್ದಾರೆ,” ಎಂದರು.</verse>
				<verse number="20">ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರೆದುಕೊಂಡು ಅವರನ್ನು ಕತ್ತೆಯ ಮೇಲೆ ಕುಳ್ಳಿರಿಸಿ, ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಬಂದನು. ಇದಲ್ಲದೆ ದೇವರ ಕೋಲನ್ನು ಕೈಯಲ್ಲಿ ತೆಗೆದುಕೊಂಡನು.</verse>
				<verse number="21">ಆಗ ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗುವಾಗ, ನಾನು ನಿನ್ನ ಕೈಯಲ್ಲಿ ಮಾಡಿಸಿದ ಎಲ್ಲಾ ಸೂಚಕಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವುದಿಲ್ಲ.</verse>
				<verse number="22">ಆಗ ನೀನು ಫರೋಹನಿಗೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲ ನನ್ನ ಮಗನು, ನನ್ನ ಜೇಷ್ಠಪುತ್ರನು.</verse>
				<verse number="23">ಫರೋಹನೇ, ನಾನು ನಿನಗೆ ಹೇಳುವುದೇನೆಂದರೆ: “ನನ್ನ ಸೇವೆಮಾಡುವಂತೆ ನನ್ನ ಮಗನನ್ನು ಕಳುಹಿಸು.” ನೀನು ಅವನನ್ನು ಕಳುಹಿಸುವುದನ್ನು ನಿರಾಕರಿಸಿದರೆ, ನಾನು ನಿನ್ನ ಮಗನನ್ನು ಅಂದರೆ, ನಿನ್ನ ಜೇಷ್ಠಪುತ್ರನನ್ನು ಕೊಲ್ಲುವೆನು,’ ಎಂದು ತಿಳಿಸಬೇಕು,” ಎಂದರು.</verse>
				<verse number="24">ಇದಲ್ಲದೆ ಮೋಶೆಯು ಹೋಗುವ ದಾರಿಯಲ್ಲಿ ವಸತಿಗೃಹದಲ್ಲಿದ್ದಾಗ, ಯೆಹೋವ ದೇವರು ಮೋಶೆಯ ಎದುರಿಗೆ ಬಂದು ಅವನನ್ನು ಕೊಲ್ಲುವುದಕ್ಕಿದ್ದಾಗ,</verse>
				<verse number="25">ಚಿಪ್ಪೋರಳು ಕಲ್ಲಿನ ಚೂರಿ ತೆಗೆದುಕೊಂಡು ತನ್ನ ಮಗನಿಗೆ ಸುನ್ನತಿ ಮಾಡಿ, ಅದನ್ನು ಮೋಶೆಯ ಪಾದಗಳಿಗೆ ಮುಟ್ಟಿಸಿ ಅವನಿಗೆ, “ಖಂಡಿತವಾಗಿ ನೀನು ನನಗೆ ರಕ್ತಧಾರೆಯಿಂದಾದ ಗಂಡನು,” ಎಂದಳು.</verse>
				<verse number="26">ಆಗ ಯೆಹೋವ ದೇವರು ಅವನನ್ನು ಉಳಿಸಿದರು. ಆಗ ಅವಳು, “ಸುನ್ನತಿಯ ನಿಮಿತ್ತ ನೀನು ನನಗೆ ರಕ್ತಧಾರೆಯಿಂದ ಗಂಡನಾಗಿದ್ದೀ,” ಎಂದಳು.</verse>
				<verse number="27">ಇದಲ್ಲದೆ ಯೆಹೋವ ದೇವರು ಆರೋನನಿಗೆ, “ಮೋಶೆಯನ್ನು ಎದುರುಗೊಳ್ಳುವದಕ್ಕೆ ಮರುಭೂಮಿಗೆ ಹೋಗು,” ಎಂದರು. ಆಗ ಅವನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಎದುರುಗೊಂಡು ಮುದ್ದಿಟ್ಟನು.</verse>
				<verse number="28">ಆಗ ಮೋಶೆಯು ಆರೋನನಿಗೆ ತನ್ನನ್ನು ಕಳುಹಿಸಿದ ಯೆಹೋವ ದೇವರ ಎಲ್ಲಾ ಮಾತುಗಳನ್ನೂ ತನಗೆ ಆಜ್ಞಾಪಿಸಿದ ಎಲ್ಲಾ ಸೂಚಕಕಾರ್ಯಗಳನ್ನೂ ತಿಳಿಸಿದನು.</verse>
				<verse number="29">ತರುವಾಯ ಮೋಶೆಯೂ ಆರೋನನೂ ಹೋಗಿ ಇಸ್ರಾಯೇಲಿನ ಹಿರಿಯರನ್ನೆಲ್ಲಾ ಒಟ್ಟುಗೂಡಿಸಿದರು.</verse>
				<verse number="30">ಯೆಹೋವ ದೇವರು ಮೋಶೆಗೆ ಹೇಳಿದ ಮಾತುಗಳನ್ನೆಲ್ಲಾ ಆರೋನನು ಅವರಿಗೆ ಹೇಳಿ, ಜನರ ಮುಂದೆ ಸೂಚಕಕಾರ್ಯಗಳನ್ನು ಮಾಡಿದನು.</verse>
				<verse number="31">ಜನರು ನಂಬಿದರು. ಯೆಹೋವ ದೇವರು ಇಸ್ರಾಯೇಲರನ್ನು ದರ್ಶಿಸಿ, ಅವರ ವ್ಯಥೆಯನ್ನು ನೋಡಿದ್ದಾರೆ ಎಂದು ಅವರು ಕೇಳಿದಾಗ, ತಲೆಬಾಗಿಸಿ ಆರಾಧಿಸಿದರು.</verse>
			</chapter>
			<chapter number="5">
				<verse number="1">ತರುವಾಯ ಮೋಶೆಯೂ ಆರೋನನೂ ಹೋಗಿ ಫರೋಹನಿಗೆ, “ಇಸ್ರಾಯೇಲಿನ ಯೆಹೋವ ದೇವರು, ‘ಮರುಭೂಮಿಯಲ್ಲಿ ನನಗೆ ನನ್ನ ಜನರು ಹಬ್ಬವನ್ನಾಚರಿಸುವುದಕ್ಕೆ ಅವರನ್ನು ಹೋಗಗೊಡಿಸು,’ ಎಂದು ಹೇಳುತ್ತಾರೆ,” ಎಂದರು.</verse>
				<verse number="2">ಆಗ ಫರೋಹನು, “ನಾನು ಆತನ ಮಾತಿಗೆ ವಿಧೇಯನಾಗಿ ಇಸ್ರಾಯೇಲರನ್ನು ಕಳುಹಿಸಿಬಿಡುವಂತೆ ಆ ಯೆಹೋವ ಯಾರು? ಆ ಯೆಹೋವ ದೇವರನ್ನು ನಾನರಿಯೆನು. ಇಸ್ರಾಯೇಲರನ್ನೂ ಕಳುಹಿಸುವುದಿಲ್ಲ,” ಎಂದನು.</verse>
				<verse number="3">ಆಗ ಅವರು ಫರೋಹನಿಗೆ, “ಹಿಬ್ರಿಯರ ದೇವರು ನಮ್ಮನ್ನು ಸಂದರ್ಶಿಸಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿವಸ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞ ಅರ್ಪಿಸುವುದಕ್ಕೆ ನಾವು ಹೋಗಬೇಕು. ಇಲ್ಲವಾದರೆ ಅವರು ಉಪದ್ರವದಿಂದಲೋ ಖಡ್ಗದಿಂದಲೋ ನಮ್ಮನ್ನು ದಂಡಿಸುವರು,” ಎಂದರು.</verse>
				<verse number="4">ಈಜಿಪ್ಟಿನ ಅರಸನು ಅವರಿಗೆ, “ಮೋಶೆಯೇ, ಆರೋನನೇ, ಜನರು ತಮ್ಮ ಕೆಲಸಗಳನ್ನು ಮಾಡದಂತೆ ಏಕೆ ಮಾಡುತ್ತೀರಿ? ನಿಮ್ಮ ಬಿಟ್ಟೀ ಕೆಲಸಗಳಿಗೆ ಹೋಗಿ,” ಎಂದನು.</verse>
				<verse number="5">ಇದಲ್ಲದೆ ಫರೋಹನು, “ಈಗ ಹಿಬ್ರಿಯರು ಈ ದೇಶದಲ್ಲಿ ಹೆಚ್ಚಿದ್ದಾರೆ. ನೀವು ಅವರನ್ನು ಅವರ ಬಿಟ್ಟಿಕೆಲಸಗಳಿಂದ ನಿಲ್ಲಿಸಿಬಿಡುತ್ತೀರಲ್ಲಾ?” ಎಂದನು.</verse>
				<verse number="6">ಅದೇ ದಿನದಲ್ಲಿ ಫರೋಹನು ಬಿಟ್ಟಿಕೆಲಸ ಮಾಡಿಸುವವರಿಗೂ ಅವರ ಮೇಲ್ವಿಚಾರಕರಿಗೂ,</verse>
				<verse number="7">“ನೀವು ಇನ್ನು ಇಟ್ಟಿಗೆಗಳನ್ನು ಮಾಡುವುದಕ್ಕೆ ಮೊದಲಿನ ಹಾಗೆ ಜನರಿಗೆ ಒಣಹುಲ್ಲನ್ನು ಕೊಡಬೇಡಿರಿ. ಅವರೇ ಹೋಗಿ ಹುಲ್ಲನ್ನು ಕೂಡಿಸಿಕೊಳ್ಳಲಿ.</verse>
				<verse number="8">ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆ ಮಾಡಬಾರದೆಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದ್ದರಿಂದ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞವನ್ನು ಅರ್ಪಿಸೋಣ,’ ಎಂದು ಕೂಗುತ್ತಾರೆ.</verse>
				<verse number="9">ಈ ಜನರು ಸುಳ್ಳು ಮಾತುಗಳಿಗೆ ಲಕ್ಷ್ಯಕೊಡದಂತೆ ಅವರ ಮೇಲೆ ಹೆಚ್ಚು ಕೆಲಸಗಳನ್ನು ಹೊರಿಸಿರಿ. ಅವರು ದುಡಿಯಲಿ,” ಎಂದು ಆಜ್ಞಾಪಿಸಿದನು.</verse>
				<verse number="10">ಆಗ ಬಿಟ್ಟಿಕೆಲಸವನ್ನು ಮಾಡಿಸುವವರೂ ಮೇಲ್ವಿಚಾರಕರೂ ಹೊರಗೆ ಹೋಗಿ ಜನರಿಗೆ, “ಫರೋಹನು ಹೀಗೆ ಹೇಳುತ್ತಾನೆ: ‘ನಾನು ನಿಮಗೆ ಒಣಹುಲ್ಲು ಕೊಡುವುದಿಲ್ಲ.</verse>
				<verse number="11">ನಿಮಗೆ ಹುಲ್ಲು ಎಲ್ಲಿ ದೊರಕುವುದೋ, ಅಲ್ಲಿಗೆ ನೀವೇ ಹೋಗಿ ತೆಗೆದುಕೊಳ್ಳಿರಿ. ಆದರೆ ನಿಮ್ಮ ಕೆಲಸವು ಏನೂ ಕಡಿಮೆಯಾಗಬಾರದು,’ ಎಂದು ಹೇಳಿದ್ದಾನೆ,” ಎಂದರು.</verse>
				<verse number="12">ಆಗ ಜನರು ಒಣಹುಲ್ಲಿಗಾಗಿ ಕಳೆಕೀಳಿಸುವುದಕ್ಕೆ ಈಜಿಪ್ಟ್ ದೇಶದಲ್ಲೆಲ್ಲಾ ಚದರಿಹೋದರು.</verse>
				<verse number="13">ಇದಲ್ಲದೆ ಬಿಟ್ಟಿಕೆಲಸ ಮಾಡಿಸುವವರು, “ಹುಲ್ಲು ಇದ್ದಾಗ ನಿಮ್ಮ ಕೆಲಸಗಳನ್ನು ಮಾಡಿದಂತೆಯೇ, ಪ್ರತಿಯೊಂದು ದಿನದಲ್ಲಿ, ಆ ದಿನದ ಕೆಲಸವನ್ನು ತೀರಿಸಿಬಿಡಬೇಕು,” ಎಂದು ಹೇಳಿ ಅವರನ್ನು ತ್ವರೆಪಡಿಸಿದರು.</verse>
				<verse number="14">ಫರೋಹನ ಅಧಿಕಾರಿಗಳು ತಾವೇ ನೇಮಿಸಿದ ಇಸ್ರಾಯೇಲರ ಮೇಲ್ವಿಚಾರಕರಿಗೆ, “ನೀವು ಮೊದಲು ಇಟ್ಟಿಗೆಗಳ ಲೆಕ್ಕವನ್ನು ಒಪ್ಪಿಸಿದಂತೆ ನಿನ್ನೆ ಈ ಹೊತ್ತು ಏಕೆ ಒಪ್ಪಿಸಲಿಲ್ಲ,” ಎಂದು ಹೇಳಿ ಅವರನ್ನು ಹೊಡೆಸಿದರು.</verse>
				<verse number="15">ಇಸ್ರಾಯೇಲರ ಮೇಲ್ವಿಚಾರಕರು ಫರೋಹನ ಬಳಿಗೆ ಹೋಗಿ, “ಏಕೆ ನಿಮ್ಮ ದಾಸರಿಗೆ ಹೀಗೆ ಮಾಡುತ್ತೀರಿ?</verse>
				<verse number="16">ನಿಮ್ಮ ದಾಸರಿಗೆ ನೇಮಿಸಿದ ಅಧಿಕಾರಿಗಳು ಹುಲ್ಲನ್ನು ಕೊಡದೆ, ‘ಇಟ್ಟಿಗೆಗಳನ್ನು ಮಾಡಿರಿ’ ಎಂದು ನಮಗೆ ಹೇಳುತ್ತಾ ನಮ್ಮನ್ನು ಹೊಡೆಯುತ್ತಿದ್ದಾರೆ. ಆದರೆ ತಪ್ಪು ನಿಮ್ಮ ಸ್ವಂತ ಜನರಲ್ಲಿಯೇ ಇದೆ,” ಎಂದರು.</verse>
				<verse number="17">ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ನೀವು, ‘ನಾವು ಹೋಗಿ ಯೆಹೋವ ದೇವರಿಗೆ ಯಜ್ಞವನ್ನರ್ಪಿಸುತ್ತೇವೆ,’ ಎಂದು ಹೇಳುತ್ತೀರಿ.</verse>
				<verse number="18">ಆದ್ದರಿಂದ ಈಗ ಹೋಗಿ ಕೆಲಸಮಾಡಿರಿ. ಹುಲ್ಲನ್ನು ನಿಮಗೆ ಕೊಡುವುದಕ್ಕಾಗುವುದಿಲ್ಲ. ಆದರೂ ನೇಮಿಸಿದ್ದ ಇಟ್ಟಿಗೆಗಳನ್ನು ನೀವು ತಯಾರಿಸಬೇಕು,” ಎಂದನು.</verse>
				<verse number="19">ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಅಪ್ಪಣೆಯಾದ್ದರಿಂದ, ಇಸ್ರಾಯೇಲರ ಮೇಲ್ವಿಚಾರಕರು ತಾವು ದುರವಸ್ಥೆಯಲ್ಲಿ ಇದ್ದೇವೆಂದು ತಿಳಿದುಕೊಂಡರು.</verse>
				<verse number="20">ಅವರು ಫರೋಹನ ಬಳಿಯಿಂದ ಹೊರಗೆ ಬಂದಾಗ, ದಾರಿಯಲ್ಲಿ ಕಾದಿದ್ದ ಮೋಶೆಯನ್ನೂ, ಆರೋನನನ್ನೂ ಸಂಧಿಸಿದರು.</verse>
				<verse number="21">ಅವರು ಮೋಶೆ ಆರೋನರಿಗೆ, “ಯೆಹೋವ ದೇವರು ನಿಮ್ಮನ್ನು ನೋಡಿ ನ್ಯಾಯತೀರಿಸಲಿ! ಏಕೆಂದರೆ ನೀವೇ ಫರೋಹನ ಮುಂದೆಯೂ ಅವನ ದಾಸರ ಮುಂದೆಯೂ ನಮ್ಮನ್ನು ಅವರು ಹೇಸಿಕೊಳ್ಳುವಂತೆ ಮಾಡಿದಿರಿ. ನಮ್ಮನ್ನು ಸಂಹರಿಸುವುದಕ್ಕೆ ನೀವು ಅವರ ಕೈಗೆ ಖಡ್ಗವನ್ನು ಕೊಟ್ಟಿದ್ದೀರಿ,” ಎಂದರು.</verse>
				<verse number="22">ಆಗ ಮೋಶೆಯು ಯೆಹೋವ ದೇವರ ಬಳಿಗೆ ಬಂದು, “ಸ್ವಾಮಿ, ಈ ಜನರಿಗೆ ಏಕೆ ಕಷ್ಟವನ್ನು ಕೊಟ್ಟಿದ್ದೀರಿ? ಏಕೆ ನನ್ನನ್ನು ಕಳುಹಿಸಿದಿರಿ?</verse>
				<verse number="23">ನಾನು ಫರೋಹನ ಬಳಿಗೆ ಬಂದು ನಿಮ್ಮ ಹೆಸರಿನಲ್ಲಿ ಮಾತನಾಡಿದಂದಿನಿಂದ, ಈ ಜನರಿಗೆ ಅವನು ಕೇಡನ್ನೇ ಮಾಡುತ್ತಿದ್ದಾನೆ. ನೀವು ನಿಮ್ಮ ಜನರನ್ನು ರಕ್ಷಿಸಲಿಲ್ಲವಲ್ಲಾ,” ಎಂದನು.</verse>
			</chapter>
			<chapter number="6">
				<verse number="1">ಆಗ ಯೆಹೋವ ದೇವರು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನನ್ನ ಬಲವಾದ ಹಸ್ತವನ್ನು ಕಂಡು ಅವನು ಅವರನ್ನು ಹೋಗಗೊಡಿಸುವನು. ನನ್ನ ಬಲವಾದ ಹಸ್ತದ ಕಾರಣದಿಂದ ಅವನು ಅವರನ್ನು ತನ್ನ ದೇಶದೊಳಗಿಂದ ಹೊರಡಿಸುವನು,” ಎಂದರು.</verse>
				<verse number="2">ಇದಲ್ಲದೆ ದೇವರು ಮೋಶೆಯ ಸಂಗಡ ಮಾತನಾಡಿ, “ನಾನೇ ಯೆಹೋವ ದೇವರು.</verse>
				<verse number="3">ನಾನೇ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಸರ್ವಶಕ್ತ ದೇವರೆಂದು ಪ್ರಕಟಿಸಿಗೊಂಡೆನು. ಆದರೆ ಯೆಹೋವ ದೇವರೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಪೂರ್ಣವಾಗಿ ತಿಳಿಸಲಿಲ್ಲ.</verse>
				<verse number="4">ಕಾನಾನ್ ದೇಶವನ್ನು ಅಂದರೆ, ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬಡಿಕೆಯನ್ನು ದೃಢಪಡಿಸಿದೆನು.</verse>
				<verse number="5">ಈಜಿಪ್ಟಿನವರು ದಾಸರನ್ನಾಗಿ ಇಟ್ಟುಕೊಂಡಿರುವ ಇಸ್ರಾಯೇಲರ ನರಳುವಿಕೆಯನ್ನು ಕೇಳಿ, ನನ್ನ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡೆನು.</verse>
				<verse number="6">“ಆದ್ದರಿಂದ ಇಸ್ರಾಯೇಲರಿಗೆ, ‘ನಾನೇ ಯೆಹೋವ ದೇವರು. ನಾನು ನಿಮ್ಮನ್ನು ಈಜಿಪ್ಟಿನ ಬಿಟ್ಟಿಕೆಲಸದಿಂದ ಅವರಿಗೆ ದಾಸತ್ವದಲ್ಲಿರುವುದರಿಂದ, ನಾನು ಚಾಚಿದ ಬಾಹುವಿನಿಂದಲೂ ಬಲವಾದ ನ್ಯಾಯತೀರ್ಪುಗಳಿಂದಲೂ ನಿಮ್ಮನ್ನು ಬಿಡಿಸುವೆನು.</verse>
				<verse number="7">ನಿಮ್ಮನ್ನು ನನ್ನ ಜನರನ್ನಾಗಿ ತೆಗೆದುಕೊಂಡು ನಿಮಗೆ ದೇವರಾಗಿರುವೆನು. ಈಜಿಪ್ಟಿನ ಬಿಟ್ಟಿಕೆಲಸಗಳೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ, ಯೆಹೋವ ದೇವರಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವುದು.</verse>
				<verse number="8">ನಾನು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಕೊಡುವೆನೆಂದು ಕೈಯನ್ನೆತ್ತಿ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಬರಮಾಡಿ, ಅದನ್ನು ನಿಮಗೆ ಸೊತ್ತಾಗಿ ಕೊಡುವೆನೆಂದು ಹೇಳಿದ ಯೆಹೋವ ದೇವರು ನಾನೇ,’ ಎಂದು ಹೇಳು,” ಎಂದರು.</verse>
				<verse number="9">ಮೋಶೆಯು ಇಸ್ರಾಯೇಲರಿಗೆ ಹಾಗೆ ಹೇಳಿದಾಗ, ಅವರು ಮನೋವೇದನೆಯ ದೆಸೆಯಿಂದಲೂ ಕ್ರೂರವಾದ ದಾಸತ್ವದ ದೆಸೆಯಿಂದಲೂ ಮೋಶೆಯ ಮಾತನ್ನು ಕೇಳಲಿಲ್ಲ.</verse>
				<verse number="10">ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,</verse>
				<verse number="11">“ನೀನು ಈಜಿಪ್ಟಿನ ಅರಸನಾದ ಫರೋಹನ ಬಳಿಗೆ ಹೋಗಿ, ಅವನು ಇಸ್ರಾಯೇಲರನ್ನು ತನ್ನ ದೇಶದಿಂದ ಹೊರಗೆ ಕಳುಹಿಸುವಂತೆ ಅವನ ಸಂಗಡ ಮಾತನಾಡು,” ಎಂದರು.</verse>
				<verse number="12">ಆದರೆ ಮೋಶೆಯು ಯೆಹೋವ ದೇವರ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತನ್ನು ಕೇಳದಿರುವಲ್ಲಿ, ತೊದಲು ಮಾತನಾಡುವ ನನ್ನ ಮಾತನ್ನು ಫರೋಹನು ಕೇಳುವುದು ಹೇಗೆ?” ಎಂದನು.</verse>
				<verse number="13">ಯೆಹೋವ ದೇವರು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ, ಇಸ್ರಾಯೇಲರನ್ನು ಈಜಿಪ್ಟಿನ ದೇಶದೊಳಗಿಂದ ಹೊರಗೆ ಬರಮಾಡುವಂತೆ ಇಸ್ರಾಯೇಲರ ಬಳಿಗೂ ಅರಸನಾದ ಫರೋಹನ ಬಳಿಗೂ ಹೋಗಬೇಕೆಂದು ಅವರಿಗೆ ಆಜ್ಞಾಪಿಸಿದರು.</verse>
				<verse number="14">ಇಸ್ರಾಯೇಲ್ ಗೋತ್ರಗಳ ಮನೆಯ ಮುಖ್ಯಸ್ಥರು ಇವರೇ: ಇಸ್ರಾಯೇಲನ ಜೇಷ್ಠ ಪುತ್ರನಾದ ರೂಬೇನನ ಪುತ್ರರು: ಹನೋಕ್, ಪಲ್ಲೂ, ಹೆಚ್ರೋನ್, ಕರ್ಮೀ. ಇವರು ರೂಬೇನನ ಗೋತ್ರಗಳ ಮೂಲ ಪುರುಷರು.</verse>
				<verse number="15">ಸಿಮೆಯೋನನ ಪುತ್ರರು: ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯಳ ಮಗನಾದ ಸೌಲ. ಇವು ಸಿಮೆಯೋನನ ಗೋತ್ರಗಳು.</verse>
				<verse number="16">ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಪುತ್ರರ ಹೆಸರುಗಳು: ಗೇರ್ಷೋನ್, ಕೊಹಾತ್, ಮೆರಾರೀ. ಲೇವಿಯು ನೂರಮೂವತ್ತೇಳು ವರ್ಷಗಳವರೆಗೆ ಬದುಕಿದ್ದನು.</verse>
				<verse number="17">ಗೇರ್ಷೋನನ ಪುತ್ರರು ಅವರ ಗೋತ್ರಗಳಿಗನುಸಾರವಾಗಿ: ಲಿಬ್ನೀ ಮತ್ತು ಶಿಮ್ಮೀಯರು.</verse>
				<verse number="18">ಕೊಹಾತನ ಪುತ್ರರು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್. ಕೊಹಾತನು ಜೀವಿಸಿದ ವರ್ಷಗಳು ನೂರಮೂವತ್ತಮೂರು.</verse>
				<verse number="19">ಮೆರಾರೀಯ ಪುತ್ರರು: ಮಹ್ಲೀ, ಮೂಷೀ. ವಂಶಾವಳಿಗಳ ಪ್ರಕಾರ ಇವೇ ಲೇವಿಯ ಗೋತ್ರಗಳು.</verse>
				<verse number="20">ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆದಳನ್ನು ಮದುವೆಯಾದನು. ಆಕೆಯು ಅವನಿಗೆ ಆರೋನನನ್ನೂ, ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರಮೂವತ್ತೇಳು ವರ್ಷಗಳು.</verse>
				<verse number="21">ಇಚ್ಹಾರನ ಪುತ್ರರು: ಕೋರಹ, ನೆಫೆಗ್ ಮತ್ತು ಜಿಕ್ರಿ.</verse>
				<verse number="22">ಉಜ್ಜೀಯೇಲನ ಪುತ್ರರು: ಮೀಶಾಯೇಲ್, ಎಲ್ಜಾಫಾನ್ ಮತ್ತು ಸಿತ್ರಿ.</verse>
				<verse number="23">ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬಳನ್ನು ಮದುವೆಯಾದನು. ಆಕೆಯು ಅವನಿಗೆ ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್ ಇವರನ್ನು ಹೆತ್ತಳು.</verse>
				<verse number="24">ಕೋರಹನ ಪುತ್ರರು: ಅಸ್ಸೀರ್ ಎಲ್ಕಾನಾ, ಅಬೀಯಾಸಾಫ್ ಎಂಬುವರು. ಇವು ಕೋರಹೀಯರ ಗೋತ್ರಗಳು.</verse>
				<verse number="25">ಆರೋನನ ಮಗ ಎಲಿಯಾಜರನು ಪೂಟಿಯೇಲನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಯಾದನು. ಆಕೆಯು ಅವನಿಗೆ ಫೀನೆಹಾಸನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿಯರ ಗೋತ್ರಗಳ ಮುಖ್ಯಸ್ಥರು.</verse>
				<verse number="26">ಆರೋನ್, ಮೋಶೆ ಇವರಿಗೆ, “ಇಸ್ರಾಯೇಲರನ್ನು ಅವರವರ ಗೋತ್ರಗಳಿಗನುಸಾರವಾಗಿ ಈಜಿಪ್ಟಿನ ಒಳಗಿಂದ ಹೊರಗೆ ಬರಮಾಡಬೇಕು,” ಎಂದು ಯೆಹೋವ ದೇವರು ಹೇಳಿದ್ದರು.</verse>
				<verse number="27">ಆದುದರಿಂದ ಮೋಶೆ, ಆರೋನರೂ ಇಸ್ರಾಯೇಲರನ್ನು ಹೊರಗೆ ತರುವುದಕ್ಕಾಗಿ ಈಜಿಪ್ಟಿನ ಅರಸನಾದ ಫರೋಹನ ಸಂಗಡ ಮಾತನಾಡಿದರು.</verse>
				<verse number="28">ಯೆಹೋವ ದೇವರು ಈಜಿಪ್ಟ್ ದೇಶದಲ್ಲಿ ಮೋಶೆಯ ಸಂಗಡ ಮಾತನಾಡಿದರು.</verse>
				<verse number="29">ಅವರು ಮೋಶೆಗೆ, “ನಾನೇ ಯೆಹೋವ ದೇವರು. ನಾನು ನಿನಗೆ ಹೇಳುವುದನ್ನೆಲ್ಲಾ ಈಜಿಪ್ಟಿನ ಅರಸನಾದ ಫರೋಹನಿಗೆ ತಿಳಿಸು,” ಎಂದರು.</verse>
				<verse number="30">ಅದಕ್ಕೆ ಮೋಶೆಯು ಯೆಹೋವ ದೇವರ ಮುಂದೆ, “ಇಗೋ, ನಾನು ತೊದಲು ಮಾತನಾಡುವವನು. ಫರೋಹನು ನನ್ನ ಮಾತನ್ನು ಹೇಗೆ ಕೇಳುತ್ತಾನೆ?” ಎಂದನು.</verse>
			</chapter>
			<chapter number="7">
				<verse number="1">ಆಗ ಯೆಹೋವ ದೇವರು ಮೋಶೆಗೆ, “ಇಗೋ, ನಿನ್ನನ್ನು ಫರೋಹನಿಗೆ ದೇವರಂತೆ ಮಾಡಿದ್ದೇನೆ. ನಿನ್ನ ಸಹೋದರನಾದ ಆರೋನನು ನಿನ್ನ ಪ್ರವಾದಿಯಾಗಿರುವನು.</verse>
				<verse number="2">ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ನೀನು ಮಾತನಾಡಬೇಕು. ಇಸ್ರಾಯೇಲರನ್ನು ತನ್ನ ದೇಶದೊಳಗಿಂದ ಕಳುಹಿಸಿಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು.</verse>
				<verse number="3">ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ, ನನ್ನ ಸೂಚಕಕಾರ್ಯಗಳನ್ನೂ, ನನ್ನ ಅದ್ಭುತಕಾರ್ಯಗಳನ್ನೂ ಈಜಿಪ್ಟ್ ದೇಶದಲ್ಲಿ ಹೆಚ್ಚಿಸುವೆನು.</verse>
				<verse number="4">ಆದರೆ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ. ಆದರೆ ನನ್ನ ಕೈಯನ್ನು ಈಜಿಪ್ಟಿನ ಮೇಲೆ ಇಟ್ಟು, ದೊಡ್ಡ ನ್ಯಾಯ ತೀರ್ಪುಗಳಿಂದ ನನ್ನ ಜನರಾದ ಇಸ್ರಾಯೇಲರನ್ನೂ, ಅವರ ಸೈನ್ಯಗಳನ್ನೂ ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡುವೆನು.</verse>
				<verse number="5">ನಾನು ಈಜಿಪ್ಟಿನ ಮೇಲೆ ನನ್ನ ಕೈಯನ್ನಿಟ್ಟು, ಅವರೊಳಗಿಂದ ಇಸ್ರಾಯೇಲರನ್ನು ಹೊರಗೆ ಬರಮಾಡಿದಾಗ, ನಾನು ಯೆಹೋವ ದೇವರೆಂದು ಈಜಿಪ್ಟಿನವರಿಗೆ ತಿಳಿದುಬರುವುದು,” ಎಂದು ಹೇಳಿದರು.</verse>
				<verse number="6">ಮೋಶೆಯೂ ಆರೋನನೂ ಯೆಹೋವ ದೇವರು ತಮಗೆ ಆಜ್ಞಾಪಿಸಿದ ಪ್ರಕಾರವೇ ಮಾಡಿದರು.</verse>
				<verse number="7">ಅವರು ಫರೋಹನ ಮುಂದೆ ಮಾತನಾಡುವಾಗ ಮೋಶೆಯು ಎಂಬತ್ತು ವರ್ಷದವನೂ ಆರೋನನು ಎಂಬತ್ತಮೂರು ವರ್ಷದವನೂ ಆಗಿದ್ದನು.</verse>
				<verse number="8">ಆಗ ಯೆಹೋವ ದೇವರು ಮಾತನಾಡಿ ಮೋಶೆಗೂ ಆರೋನನಿಗೂ,</verse>
				<verse number="9">“ಫರೋಹನು ನಿಮಗೆ, ‘ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರಿ,’ ಎಂದಾಗ ನೀನು ಆರೋನನಿಗೆ, ‘ನಿನ್ನ ಕೋಲನ್ನು ತೆಗೆದುಕೊಂಡು ಫರೋಹನ ಮುಂದೆ ಬಿಸಾಡು,’ ಎಂದು ಹೇಳು, ಆಗ ಅದು ಸರ್ಪವಾಗುವುದು,” ಎಂದು ಹೇಳಿದರು.</verse>
				<verse number="10">ಆಗ ಮೋಶೆಯೂ ಆರೋನನೂ ಫರೋಹನ ಬಳಿಗೆ ಹೋಗಿ ಯೆಹೋವ ದೇವರು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹ ಮತ್ತು ಅವನ ಸೇವಕರ ಮುಂದೆಯೂ ಬಿಸಾಡಿದಾಗ, ಅದು ಸರ್ಪವಾಯಿತು.</verse>
				<verse number="11">ಫರೋಹನು ಜ್ಞಾನಿಗಳನ್ನೂ, ಮಂತ್ರವಾದಿಗಳನ್ನೂ ಕರೆಸಿದನು. ಆಗ ಈಜಿಪ್ಟಿನ ಮಂತ್ರಗಾರರೂ ಸಹ ತಮ್ಮ ಮಾಟಗಳಿಂದ ಹಾಗೆಯೇ ಮಾಡಿದರು.</verse>
				<verse number="12">ಅವರು ತಮ್ಮ ತಮ್ಮ ಕೋಲುಗಳನ್ನು ಬಿಸಾಡಿದಾಗ, ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.</verse>
				<verse number="13">ಯೆಹೋವ ದೇವರು ಹೇಳಿದಂತೆಯೇ ಫರೋಹನ ಹೃದಯವು ಕಠಿಣವಾಯಿತು. ಅವನು ಅವರ ಮಾತನ್ನು ಕೇಳಲಿಲ್ಲ.</verse>
				<verse number="14">ಆಗ ಯೆಹೋವ ದೇವರು ಮೋಶೆಗೆ, “ಫರೋಹನ ಹೃದಯವು ಕಠಿಣವಾಯಿತು. ಅವನು ಜನರನ್ನು ಕಳುಹಿಸಿಬಿಡುವುದಕ್ಕೆ ನಿರಾಕರಿಸುತ್ತಿದ್ದಾನೆ.</verse>
				<verse number="15">ಬೆಳಿಗ್ಗೆ ಫರೋಹನ ಬಳಿಗೆ ಹೋಗು. ಅವನು ಹೊರಗೆ ನದಿಯ ಬಳಿಗೆ ಹೋಗುವನು. ಆಗ ನೈಲ್ ನದಿ ತೀರದಲ್ಲಿ ಅವನೆದುರಿಗೆ ನಿಂತುಕೊಂಡು, ಸರ್ಪವಾಗಿ ಮಾಡಿದ ಕೋಲನ್ನು ನಿನ್ನ ಕೈಯಲ್ಲಿ ಹಿಡಿದುಕೊಂಡಿರು.</verse>
				<verse number="16">ಅವನಿಗೆ ನೀನು, ‘ಹಿಬ್ರಿಯರ ದೇವರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ಮರುಭೂಮಿಯಲ್ಲಿ ನನಗೆ ಆರಾಧನೆ ಮಾಡುವ ಹಾಗೆ ನನ್ನ ಜನರನ್ನು ಕಳುಹಿಸು, ಎಂದು ಅವರು ಹೇಳಿದ್ದಾರೆ. ಆದರೆ ಇಗೋ, ಇಂದಿನವರೆಗೂ ನೀನು ಕೇಳಲಿಲ್ಲ.</verse>
				<verse number="17">ಆದುದರಿಂದ ಯೆಹೋವ ದೇವರು ಮತ್ತೆ ನಿನಗೆ ಹೇಳುವುದೇನೆಂದರೆ: ನಾನೇ ಯೆಹೋವ ದೇವರೆಂದು ನೀನು ಇದರಿಂದ ತಿಳಿದುಕೊಳ್ಳುವೆ. ನನ್ನ ಕೈಯಲ್ಲಿರುವ ಕೋಲಿನಿಂದ, ನೈಲ್ ನದಿಯಲ್ಲಿರುವ ನೀರನ್ನು ಹೊಡೆಯುವೆನು, ಆಗ ಅದು ರಕ್ತವಾಗುವುದು.</verse>
				<verse number="18">ನದಿಯಲ್ಲಿರುವ ಮೀನುಗಳು ಸಾಯುವುವು. ನೈಲ್ ನದಿಯು ಹೊಲಸಾಗಿ ನಾರುವುದು. ಈಜಿಪ್ಟಿನವರು ನದಿಯ ನೀರನ್ನು ಕುಡಿಯುವುದಕ್ಕೆ ಅಸಹ್ಯಪಡುವರು,’ ಎಂದು ಹೇಳು,” ಎಂದರು.</verse>
				<verse number="19">ಅನಂತರ ಯೆಹೋವ ದೇವರು ಮೋಶೆಗೆ, “ನೀನು ಆರೋನನಿಗೆ, ‘ನಿನ್ನ ಕೋಲನ್ನು ತೆಗೆದುಕೊಂಡು ಈಜಿಪ್ಟಿನ ನೀರಿನ ಮೇಲೆಯೂ ಅದರ ನದಿಗಳ ಮೇಲೆಯೂ ಕೊಳಗಳ ಮೇಲೆಯೂ ಅದರ ಕಾಲುವೆ ಮೇಲೆಯೂ ಅದರ ಕೆರೆಗಳ ಮೇಲೆಯೂ ಕೈಚಾಚು,’ ಎಂದು ಹೇಳು. ಆಗ ಅವು ರಕ್ತವಾಗುವುವು. ಈಜಿಪ್ಟ್ ದೇಶದಲ್ಲಿ ನೀರಿರುವ ಮರದ ತೊಟ್ಟಿಗಳಲ್ಲಾಗಲೀ, ಕಲ್ಲಿನ ಪಾತ್ರೆಗಳಲ್ಲಾಗಲೀ ರಕ್ತವಿರುವುದು,” ಎಂದು ಹೇಳಿದರು.</verse>
				<verse number="20">ಮೋಶೆಯೂ ಆರೋನನೂ ಯೆಹೋವ ದೇವರು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅವನು ಕೋಲನ್ನು ಎತ್ತಿ, ನೈಲ್ ನದಿಯಲ್ಲಿರುವ ನೀರನ್ನು ಫರೋಹನ ಮುಂದೆಯೂ, ಅವನ ಸೇವಕರ ಮುಂದೆಯೂ ಹೊಡೆದನು. ಆಗ ನದಿಯಲ್ಲಿದ್ದ ನೀರೆಲ್ಲಾ ರಕ್ತವಾಯಿತು.</verse>
				<verse number="21">ನದಿಯಲ್ಲಿದ್ದ ಮೀನುಗಳು ಸತ್ತವು, ನದಿಯು ದುರ್ವಾಸನೆಗೊಂಡಿತು. ಈಜಿಪ್ಟಿನವರು ನೈಲ್ ನದಿಯ ನೀರನ್ನು ಕುಡಿಯಲಾರದೆ ಹೋದರು. ಆಗ ಈಜಿಪ್ಟ್ ದೇಶದಲ್ಲೆಲ್ಲಾ ರಕ್ತವಿತ್ತು.</verse>
				<verse number="22">ಆದರೆ ಈಜಿಪ್ಟಿನ ಮಂತ್ರಗಾರರು ತಮ್ಮ ಮಾಟಗಳಿಂದ ಹಾಗೆಯೇ ಮಾಡಿದ್ದರಿಂದ ಫರೋಹನ ಹೃದಯವು ಕಠಿಣವಾಯಿತು. ಯೆಹೋವ ದೇವರು ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.</verse>
				<verse number="23">ಫರೋಹನು ತಿರುಗಿಕೊಂಡು ತನ್ನ ಅರಮನೆಗೆ ಹಿಂದಿರುಗಿದನು. ಅವನು ಈ ಅದ್ಭುತಕ್ಕೂ ಗಮನಕೊಡಲಿಲ್ಲ.</verse>
				<verse number="24">ಆದರೆ ಈಜಿಪ್ಟಿನವರೆಲ್ಲರೂ ನದಿಯ ನೀರನ್ನು ಕುಡಿಯಲಾರದೆ, ಕುಡಿಯುವ ನೀರಿಗಾಗಿ ನೈಲ್ ನದಿಯ ಸುತ್ತಲೂ ಅಗೆದರು.</verse>
				<verse number="25">ಯೆಹೋವ ದೇವರು ನೈಲ್ ನದಿಯನ್ನು ರಕ್ತವನ್ನಾಗಿ ಮಾಡಿ ಏಳು ದಿನಗಳು ಕಳೆದವು.</verse>
			</chapter>
			<chapter number="8">
				<verse number="1">ಅನಂತರ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಅವನಿಗೆ, “ನೀನು ಫರೋಹನ ಬಳಿಗೆ ಹೋಗಿ ಅವನಿಗೆ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನನ್ನನ್ನು ಆರಾಧಿಸುವಂತೆ ನನ್ನ ಜನರನ್ನು ಕಳುಹಿಸು.</verse>
				<verse number="2">ಕಳುಹಿಸುವುದಕ್ಕೆ ನಿರಾಕರಿಸಿದರೆ, ನಾನು ನಿನ್ನ ದೇಶವನ್ನೆಲ್ಲಾ ಕಪ್ಪೆಗಳಿಂದ ಉಪದ್ರವ ತರುವೆನು.</verse>
				<verse number="3">ನೈಲ್ ನದಿಯಲ್ಲಿ ಕಪ್ಪೆಗಳು ತುಂಬಿಹೋಗುವುವು. ಅವು ನಿನ್ನ ಅರಮನೆಯಲ್ಲಿಯೂ ನೀನು ಮಲಗುವ ಕೊಠಡಿಯಲ್ಲಿಯೂ ನಿನ್ನ ಹಾಸಿಗೆಯ ಮೇಲೂ ನಿನ್ನ ಸೇವಕರ ಮನೆಗಳಲ್ಲಿಯೂ ನಿನ್ನ ಜನರ ಮೇಲೆಯೂ ನಿನ್ನ ಒಲೆಗಳಲ್ಲಿಯೂ ನಿನ್ನ ಹಿಟ್ಟು ನಾದುವ ಹರಿವಾಣಗಳಲ್ಲಿಯೂ ಕಾಣಿಸಿಕೊಳ್ಳುವುವು.</verse>
				<verse number="4">ನಿನ್ನ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಎಲ್ಲಾ ಅಧಿಕಾರಿಗಳ ಮೇಲೆಯೂ ಕಪ್ಪೆಗಳು ಏರಿ ಬರುವುವು,’ ಎಂದು ಹೇಳು,” ಎಂದರು.</verse>
				<verse number="5">ಅನಂತರ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನೀನು ಕೋಲನ್ನು ಹಿಡಿದುಕೊಂಡು ನದಿ, ಕಾಲುವೆ, ಕೆರೆಗಳ ಮೇಲೆಲ್ಲಾ ನಿನ್ನ ಕೈಚಾಚಿ ಈಜಿಪ್ಟ್ ದೇಶದ ಮೇಲೆಲ್ಲಾ ಕಪ್ಪೆಗಳು ಬರುವಂತೆ ಮಾಡು,’ ಎಂದು ಹೇಳಬೇಕು,” ಎಂದರು.</verse>
				<verse number="6">ಆರೋನನು ಈಜಿಪ್ಟಿನ ನೀರಿನ ಮೇಲೆ ಕೈಚಾಚಿದಾಗ, ಕಪ್ಪೆಗಳು ಏರಿಬಂದು ಈಜಿಪ್ಟ್ ದೇಶವನ್ನು ಮುತ್ತಿಕೊಂಡವು.</verse>
				<verse number="7">ಆದರೆ ಮಂತ್ರಗಾರರು ತಮ್ಮ ಮಾಟಗಳಿಂದ ಹಾಗೆಯೇ ಮಾಡಿ, ಕಪ್ಪೆಗಳನ್ನು ಈಜಿಪ್ಟ್ ದೇಶದ ಮೇಲೆ ಬರಮಾಡಿದರು.</verse>
				<verse number="8">ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಯೆಹೋವ ದೇವರನ್ನು ಬೇಡಿಕೊಂಡು ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಬೇಕು. ಹಾಗೆ ಮಾಡಿದರೆ ನಿಮ್ಮ ಜನರು ಯೆಹೋವ ದೇವರಿಗೋಸ್ಕರ ಯಜ್ಞಮಾಡುವಂತೆ ಅವರಿಗೆ ನಾನು ಅಪ್ಪಣೆ ಕೊಡುವೆನು,” ಎಂದನು.</verse>
				<verse number="9">ಅದಕ್ಕೆ ಮೋಶೆ, “ಈ ಕಪ್ಪೆಗಳು ತಮ್ಮ ಬಳಿಯಿಂದಲೂ ನಿನ್ನ ಮನೆಗಳಿಂದಲೂ ತೊಲಗಿ ಹೋಗಿ, ನೈಲ್ ನದಿಯಲ್ಲಿ ಮಾತ್ರ ಉಳಿಯುವಂತೆ ನಾನು ಯಾವಾಗ ನಿನ್ನ ಪರವಾಗಿ, ನಿನ್ನ ಪ್ರಜಾ ಪರಿವಾರದ ಪರವಾಗಿ ಪ್ರಾರ್ಥನೆ ಸಲ್ಲಿಸಬೇಕು? ನಿನಗೆ ಸರಿದೋರಿದಂತೆ ನೀನೇ ಅದಕ್ಕೊಂದು ಕಾಲವನ್ನು ನಿಗದಿಮಾಡಬೇಕು,” ಎಂದು ಫರೋಹನನ್ನು ವಿನಂತಿಸಿದನು.</verse>
				<verse number="10">ಫರೋಹನು ಮೋಶೆಗೆ, “ನಾಳೆ,” ಎಂದನು. ಆಗ ಮೋಶೆಯು, “ನಮ್ಮ ದೇವರಾಗಿರುವ ಯೆಹೋವ ದೇವರ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ, ನಿನ್ನ ಮಾತಿನ ಪ್ರಕಾರ ಆಗಲಿ.</verse>
				<verse number="11">ಕಪ್ಪೆಗಳು ನಿನ್ನಿಂದಲೂ ನಿನ್ನ ಮನೆಗಳಿಂದಲೂ ನಿನ್ನ ಸೇವಕರಿಂದಲೂ ನಿನ್ನ ಜನರಿಂದಲೂ ಹೊರಟುಹೋಗಿ, ನೈಲ್ ನದಿಯಲ್ಲಿ ಮಾತ್ರ ಇರುವುವು,” ಎಂದನು.</verse>
				<verse number="12">ಮೋಶೆ ಆರೋನರು ಫರೋಹನನ್ನು ಬಿಟ್ಟು ಹೊರಗೆ ಹೋದಾಗ, ಮೋಶೆ ಫರೋಹನ ಮೇಲೆ ಬರಮಾಡಿದ ಕಪ್ಪೆಗಳ ಕಾಟದ ಬಗ್ಗೆ ಯೆಹೋವ ದೇವರಿಗೆ ಮೊರೆಯಿಟ್ಟನು.</verse>
				<verse number="13">ಮೋಶೆ ಹೇಳಿದ ಪ್ರಕಾರ ಯೆಹೋವ ದೇವರು ಮಾಡಿದರು. ಮನೆಗಳಲ್ಲಿಯೂ ಅಂಗಳಗಳಲ್ಲಿಯೂ ಹೊಲಗಳಲ್ಲಿಯೂ ಇದ್ದ ಕಪ್ಪೆಗಳು ಸತ್ತವು.</verse>
				<verse number="14">ಅವರು ಅವುಗಳನ್ನು ರಾಶಿಗಳಾಗಿ ಕೂಡಿಸಿಟ್ಟಿದ್ದರಿಂದ ದೇಶವು ದುರ್ವಾಸನೆಯಿಂದ ತುಂಬಿತು.</verse>
				<verse number="15">ಆದರೆ ಫರೋಹನು ತನಗೆ ಉಪಶಮನವಾಯಿತೆಂದು ನೋಡಿದಾಗ, ಯೆಹೋವ ದೇವರು ಹೇಳಿದಂತೆ ಅವನು ತನ್ನ ಹೃದಯವನ್ನು ಕಠಿಣ ಮಾಡಿಕೊಂಡು, ಮೋಶೆ ಮತ್ತು ಆರೋನರ ಮಾತನ್ನು ಕೇಳಲಿಲ್ಲ.</verse>
				<verse number="16">ಅನಂತರ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, “ನೀನು ಆರೋನನಿಗೆ, ‘ನೀನು ಕೋಲನ್ನು ಚಾಚಿ ಭೂಮಿಯ ಧೂಳನ್ನು ಹೊಡೆ, ಆಗ ಈಜಿಪ್ಟ್ ದೇಶದಲ್ಲೆಲ್ಲಾ ಧೂಳು ಹೇನುಗಳಾಗುವುವು,’ ಎಂದು ಹೇಳು,” ಎಂದರು.</verse>
				<verse number="17">ಅವರು ಹಾಗೆಯೇ ಮಾಡಲಾರಂಭಿಸಿದರು. ಆರೋನನು ಕೋಲನ್ನು ಕೈಯಲ್ಲಿ ಹಿಡಿದು, ಅದನ್ನು ಚಾಚಿ, ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹೇನುಗಳಾದವು. ಈಜಿಪ್ಟ್ ದೇಶದಲ್ಲೆಲ್ಲಾ ನೆಲದ ಧೂಳು ಹೇನುಗಳಾದವು</verse>
				<verse number="18">ಮಂತ್ರಗಾರರು ಹೇನುಗಳನ್ನು ಬರಮಾಡುವುದಕ್ಕೆ ತಮ್ಮ ಮಾಟಗಳಿಂದ ಪ್ರಯತ್ನಿಸಿದರು, ಆದರೆ ಸಾಧ್ಯವಾಗದೆ ಹೋಯಿತು. ಆ ಹೇನುಗಳು ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹಾಗೆಯೇ ಇದ್ದವು.</verse>
				<verse number="19">ಆಗ ಮಂತ್ರಗಾರರು ಫರೋಹನಿಗೆ, “ಇದು ದೇವರ ಕೈಕೆಲಸವೇ ಸರಿ,” ಎಂದರು. ಆದರೆ ಯೆಹೋವ ದೇವರು ಹೇಳಿದಂತೆ ಫರೋಹನ ಹೃದಯ ಕಠಿಣವಾಯಿತು. ಆದ್ದರಿಂದ ಅವನು ಅವರ ಮಾತನ್ನು ಕೇಳಲಿಲ್ಲ.</verse>
				<verse number="20">ಆಗ ಯೆಹೋವ ದೇವರು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜನರು ನನ್ನನ್ನು ಆರಾಧಿಸುವಂತೆ ಅವರನ್ನು ಕಳುಹಿಸು.</verse>
				<verse number="21">ನೀನು ನನ್ನ ಜನರನ್ನು ಕಳುಹಿಸದೆ ಹೋದರೆ, ನಾನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಮನೆಗಳಿಗೂ ನೊಣಗಳನ್ನು ಕಳುಹಿಸುವೆನು. ಈಜಿಪ್ಟಿನವರ ಮನೆಗಳೂ, ಅವರು ವಾಸವಾಗಿರುವ ಭೂಮಿಯೂ ನೊಣಗಳಿಂದ ತುಂಬಿರುವುವು.</verse>
				<verse number="22">“ ‘ಆದರೆ ಆ ದಿವಸದಲ್ಲಿ ನಾನೇ ಭೂಲೋಕದಲ್ಲಿ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವಂತೆ, ನನ್ನ ಜನರು ವಾಸಿಸುವ ಗೋಷೆನ್ ಪ್ರಾಂತದಲ್ಲಿ ನೊಣಗಳು ಇರದ ಹಾಗೆ ಅದನ್ನು ನಾನು ಪ್ರತ್ಯೇಕಿಸುವೆನು.</verse>
				<verse number="23">ನನ್ನ ಜನರನ್ನೂ, ನಿನ್ನ ಜನರನ್ನೂ ವಿಂಗಡಿಸುವೆನು. ನಾಳೆ ಈ ಸೂಚಕಕಾರ್ಯ ಕಾಣುವುದು,’ ಎಂದು ಹೇಳು,” ಎಂದರು.</verse>
				<verse number="24">ಯೆಹೋವ ದೇವರು ಹಾಗೆಯೇ ಮಾಡಲಾರಂಭಿಸಿದರು. ಬಾಧಿಸುವ ನೊಣಗಳು ಫರೋಹನ ಮನೆಯಲ್ಲಿಯೂ ಅವನ ಸೇವಕರ ಮನೆಗಳಲ್ಲಿಯೂ ಸಮಸ್ತ ಈಜಿಪ್ಟ್ ದೇಶದಲ್ಲಿಯೂ ಬಂದವು. ನೊಣಗಳಿಂದ ದೇಶವು ಹಾಳಾಗಿ ಹೋಯಿತು.</verse>
				<verse number="25">ಆಗ ಫರೋಹನು ಮೋಶೆ ಆರೋನರನ್ನು ಕರೆಯಿಸಿ ಅವರಿಗೆ, “ನೀವು ಹೋಗಿ ಈ ದೇಶದಲ್ಲಿಯೇ ನಿಮ್ಮ ದೇವರಿಗೆ ಯಜ್ಞವನ್ನರ್ಪಿಸಿರಿ,” ಎಂದನು.</verse>
				<verse number="26">ಆದರೆ ಮೋಶೆಯು ಫರೋಹನಿಗೆ, “ಹಾಗೆ ಮಾಡುವುದು ಯುಕ್ತವಲ್ಲ. ಏಕೆಂದರೆ ನಮ್ಮ ಯೆಹೋವ ದೇವರಾದ ದೇವರಿಗೆ ಯಜ್ಞವನ್ನರ್ಪಿಸುವುದು ಈಜಿಪ್ಟಿನವರಿಗೆ ಅಸಹ್ಯವಾಗಿರುವುದು. ಈಜಿಪ್ಟಿನವರಿಗೆ ಅಸಹ್ಯವಾಗಿರುವುದನ್ನು ಅವರ ಕಣ್ಣೆದುರಿಗೆ ಅರ್ಪಿಸಿದರೆ, ಅವರು ನಮ್ಮ ಮೇಲೆ ಕಲ್ಲೆಸೆದಾರು.</verse>
				<verse number="27">ಮರುಭೂಮಿಯಲ್ಲಿ ಮೂರು ದಿನಗಳು ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವ ದೇವರಿಗೆ ಅವರ ಅಪ್ಪಣೆಯಂತೆ ಯಜ್ಞಮಾಡುವೆವು,” ಎಂದು ಹೇಳಿದನು.</verse>
				<verse number="28">ಅದಕ್ಕೆ ಫರೋಹನು ಅವನಿಗೆ, “ನಿಮ್ಮ ದೇವರಾದ ಯೆಹೋವ ದೇವರಿಗೆ ಮರುಭೂಮಿಯಲ್ಲಿ ಯಜ್ಞವನ್ನರ್ಪಿಸುವಂತೆ ನಿಮ್ಮನ್ನು ಕಳುಹಿಸುತ್ತೇನೆ. ಆದರೆ ದೂರ ಹೋಗಬೇಡಿರಿ, ನನಗೋಸ್ಕರ ಪ್ರಾರ್ಥನೆಮಾಡಿರಿ,” ಎಂದನು.</verse>
				<verse number="29">ಆಗ ಮೋಶೆಯು ಅವನಿಗೆ, “ನಾನು ನಿನ್ನನ್ನು ಬಿಟ್ಟು ಹೋಗಿ, ಯೆಹೋವ ದೇವರಿಗೆ ಪ್ರಾರ್ಥನೆ ಮಾಡುವೆನು. ನೊಣಗಳು ನಾಳೆ ಫರೋಹನನ್ನೂ, ಅವನ ಸೇವಕರನ್ನೂ, ಅವರ ಜನರನ್ನೂ ಬಿಟ್ಟು ಹೋಗುವುವು. ಆದರೆ ಯೆಹೋವ ದೇವರಿಗೆ ಯಜ್ಞವನ್ನರ್ಪಿಸುವುದಕ್ಕೆ ಫರೋಹನಾದ ನೀನು ಜನರನ್ನು ಕಳುಹಿಸದೆ ಇನ್ನು ಮೇಲೆ ವಂಚಿಸಬಾರದು,” ಎಂದನು.</verse>
				<verse number="30">ತರುವಾಯ ಮೋಶೆಯು ಫರೋಹನನ್ನು ಬಿಟ್ಟು ಹೋಗಿ, ಯೆಹೋವ ದೇವರನ್ನು ಬೇಡಿಕೊಂಡನು.</verse>
				<verse number="31">ಮೋಶೆಯು ಕೇಳಿದಂತೆಯೇ ಯೆಹೋವ ದೇವರು ಮಾಡಿದರು. ಅವರು ಫರೋಹನಿಂದಲೂ ಅವನ ಸೇವಕರಿಂದಲೂ, ಅವರ ಜನರಿಂದಲೂ ನೊಣಗಳನ್ನು ತೆಗೆದುಹಾಕಿದರು. ಅಲ್ಲಿ ಒಂದಾದರೂ ಉಳಿಯಲಿಲ್ಲ.</verse>
				<verse number="32">ಆದರೆ ಫರೋಹನು ಆ ಸಮಯದಲ್ಲಿಯೂ ತನ್ನ ಹೃದಯವನ್ನು ಕಠಿಣ ಮಾಡಿಕೊಂಡಿದ್ದಲ್ಲದೆ, ಜನರನ್ನೂ ಹೋಗಗೊಡಿಸಲಿಲ್ಲ.</verse>
			</chapter>
			<chapter number="9">
				<verse number="1">ಅನಂತರ ಯೆಹೋವ ದೇವರು ಮೋಶೆಗೆ ಹೇಳಿದ್ದೇನಂದರೆ, “ಫರೋಹನ ಬಳಿಗೆ ಹೋಗಿ ಅವನಿಗೆ, ‘ಹಿಬ್ರಿಯರ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನನ್ನನ್ನು ಆರಾಧಿಸುವಂತೆ ನನ್ನ ಜನರನ್ನು ಕಳುಹಿಸು.”</verse>
				<verse number="2">ಅವರನ್ನು ಕಳುಹಿಸುವುದಕ್ಕೆ ನಿರಾಕರಿಸಿ ಇನ್ನೂ ತಡೆದರೆ,</verse>
				<verse number="3">ಯೆಹೋವ ದೇವರ ಕೈ ಹೊಲದಲ್ಲಿರುವ ನಿನ್ನ ಪಶುಗಳ ಮೇಲೆ ಇರುವುದು. ಕುದುರೆ, ಕತ್ತೆ, ಒಂಟೆ, ಎತ್ತು, ಕುರಿ, ಆಡು ಇವುಗಳ ಮೇಲೆ ಕಠಿಣವಾದ ಉಪದ್ರವ ಬರುವುದು.</verse>
				<verse number="4">ಯೆಹೋವ ದೇವರು ಇಸ್ರಾಯೇಲರ ಪಶುಗಳನ್ನೂ ಈಜಿಪ್ಟಿನವರ ಪಶುಗಳನ್ನೂ ವಿಂಗಡಿಸುವರು. ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯುವುದಿಲ್ಲ,’ ” ಎಂದರು.</verse>
				<verse number="5">ಇದಲ್ಲದೆ ಯೆಹೋವ ದೇವರು, “ನಿರ್ದಿಷ್ಟವಾದ ಒಂದು ಸಮಯವನ್ನು ನೇಮಿಸಿ, ನಾಳೆ ಯೆಹೋವ ದೇವರು ಈ ಕಾರ್ಯವನ್ನು ಈ ದೇಶದಲ್ಲಿ ಮಾಡುವರು, ಎಂದು ಹೇಳು,” ಎಂದರು.</verse>
				<verse number="6">ಮಾರನೆಯ ದಿನವೇ ಯೆಹೋವ ದೇವರು ಆ ಕಾರ್ಯವನ್ನು ಮಾಡಲಾರಂಭಿಸಿದರು. ಈಜಿಪ್ಟಿನ ಪಶುಗಳೆಲ್ಲಾ ಸತ್ತು ಹೋದವು. ಆದರೆ ಇಸ್ರಾಯೇಲರ ಪಶುಗಳಲ್ಲಿ ಒಂದೂ ಸಾಯಲಿಲ್ಲ.</verse>
				<verse number="7">ಫರೋಹನು ಆಳುಗಳನ್ನು ಕಳುಹಿಸಿ ನೋಡಿದಾಗ, ಇಸ್ರಾಯೇಲರ ಪಶುಗಳಲ್ಲಿ ಒಂದೂ ಸತ್ತಿರಲಿಲ್ಲ. ಆದರೆ ಫರೋಹನ ಹೃದಯವು ಕಠಿಣವಾಗಿದ್ದುದರಿಂದ ಅವನು ಜನರನ್ನು ಹೋಗಗೊಡಿಸಲಿಲ್ಲ.</verse>
				<verse number="8">ಆಗ ಯೆಹೋವ ದೇವರು ಮೋಶೆ ಆರೋನರಿಗೆ, “ಕೈತುಂಬಾ ಒಲೆಯ ಬೂದಿಯನ್ನು ತೆಗೆದುಕೊಳ್ಳಿರಿ. ಅದನ್ನು ಮೋಶೆಯು ಫರೋಹನ ಮುಂದೆ ಆಕಾಶದ ಕಡೆಗೆ ತೂರಲಿ.</verse>
				<verse number="9">ಆಗ ಅದು ಈಜಿಪ್ಟ್ ದೇಶದಲ್ಲೆಲ್ಲಾ ಪುಡಿಯಾಗುವುದು. ಅದು ಈಜಿಪ್ಟ್ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಹುಣ್ಣುಗಳಾಗುವ ಬೊಕ್ಕೆಗಳು ಏಳುವಂತೆ ಮಾಡುವುದು,” ಎಂದು ಹೇಳಿದರು.</verse>
				<verse number="10">ಆಗ ಅವರು ಒಲೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತರು. ಮೋಶೆಯು ಅದನ್ನು ಆಕಾಶದ ಕಡೆಗೆ ತೂರಿದನು. ಆಗ ಅದು ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಹರಡಿ ಹುಣ್ಣುಗಳಾಗುವಂಥ ಬೊಕ್ಕೆಗಳಾದವು.</verse>
				<verse number="11">ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳಲಾರದೆ ಹೋದರು. ಏಕೆಂದರೆ ಹುಣ್ಣುಗಳು ಮಂತ್ರಗಾರರ ಮೇಲೆಯೂ ಈಜಿಪ್ಟಿನವರ ಮೇಲೆಯೂ ಇದ್ದವು.</verse>
				<verse number="12">ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದರು. ಯೆಹೋವ ದೇವರು ಮೋಶೆಗೆ ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.</verse>
				<verse number="13">ಯೆಹೋವ ದೇವರು ಮೋಶೆಗೆ, “ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ, ‘ಹಿಬ್ರಿಯರ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನನ್ನು ಅವರು ಆರಾಧಿಸುವ ಹಾಗೆ ನನ್ನ ಜನರನ್ನು ಕಳುಹಿಸು.</verse>
				<verse number="14">ಭೂಲೋಕದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ, ಈ ಸಾರಿ ನಾನು ಎಲ್ಲಾ ಉಪದ್ರವಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡುವೆನು.</verse>
				<verse number="15">ಈಗ ನನ್ನ ಕೈಚಾಚಿ ನಿನ್ನನ್ನೂ, ನಿನ್ನ ಜನರನ್ನೂ ಉಪದ್ರವದಿಂದ ಬಾಧಿಸುವೆನು. ನಿನ್ನನ್ನು ಭೂಮಿಯೊಳಗಿಂದ ನಿರ್ಮೂಲ ಮಾಡುವೆನು.</verse>
				<verse number="16">ಆದರೆ ನಿಶ್ಚಯವಾಗಿ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.</verse>
				<verse number="17">ನೀನು ಇನ್ನೂ ಅವರನ್ನು ಕಳುಹಿಸದೆ ನನ್ನ ಜನರಿಗೆ ವಿರೋಧವಾಗಿ ನಿನ್ನನ್ನು ನೀನೇ ಹೆಚ್ಚಿಸಿಕೊಳ್ಳುತ್ತೀಯೋ?</verse>
				<verse number="18">ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ಮಹಾ ಕಠಿಣವಾದ ಆಲಿಕಲ್ಲಿನ ಮಳೆಯನ್ನು ಬೀಳುವಂತೆ ಮಾಡುವೆನು. ಅಂಥದ್ದು ಈಜಿಪ್ಟಿನಲ್ಲಿ, ಅದರ ರಾಜ್ಯವು ಸ್ಥಾಪಿತವಾದಂದಿನಿಂದ ಇಲ್ಲಿಯವರೆಗೂ ಆಗಿಲ್ಲ.</verse>
				<verse number="19">ಹೀಗಿರುವುದರಿಂದ ಯಾರನ್ನಾದರೂ ಕಳುಹಿಸಿ ನಿನ್ನ ಪಶುಗಳನ್ನೂ, ಹೊಲದಲ್ಲಿ ನಿನಗಿರುವವುಗಳನ್ನೂ ಭದ್ರಪಡಿಸು. ಏಕೆಂದರೆ ಮನೆಗಳಿಗೆ ಬಾರದೆ ಹೊಲದಲ್ಲಿ ಸಿಕ್ಕುವ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಆಲಿಕಲ್ಲಿನ ಮಳೆಯು ಸುರಿದು ಕೊಲ್ಲುವುದು,’ ಎಂದು ಹೇಳು,” ಎಂದರು.</verse>
				<verse number="20">ಆಗ ಫರೋಹನ ಸೇವಕರಲ್ಲಿ ಯೆಹೋವ ದೇವರ ವಾಕ್ಯಕ್ಕೆ ಭಯಪಟ್ಟವರೆಲ್ಲರೂ ತಮ್ಮ ದಾಸರನ್ನೂ ಪಶುಗಳನ್ನೂ ಮನೆಗಳಿಗೆ ಓಡಿ ಬರುವಂತೆ ಮಾಡಿದರು.</verse>
				<verse number="21">ಆದರೆ ಯೆಹೋವ ದೇವರ ವಾಕ್ಯಕ್ಕೆ ಮನಸ್ಸು ಕೊಡದವರು, ತಮ್ಮ ದಾಸರನ್ನೂ ಪಶುಗಳನ್ನೂ ಹೊಲದಲ್ಲಿ ಬಿಟ್ಟರು.</verse>
				<verse number="22">ಆಗ ಯೆಹೋವ ದೇವರು ಮೋಶೆಗೆ, “ಆಕಾಶದ ಕಡೆಗೆ ನಿನ್ನ ಕೈಚಾಚು. ಈಜಿಪ್ಟ್ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಮತ್ತು ಈಜಿಪ್ಟ್ ದೇಶದಲ್ಲಿ ಇರುವ ಎಲ್ಲಾ ಹೊಲದ ಬೆಳೆಯ ಮೇಲೆಯೂ ಆಲಿಕಲ್ಲಿನ ಮಳೆ ಸುರಿಯುವುದು,” ಎಂದು ಪ್ರಕಟಪಡಿಸಿದರು.</verse>
				<verse number="23">ಮೋಶೆಯು ಆಕಾಶದ ಕಡೆಗೆ ತನ್ನ ಕೋಲನ್ನು ಚಾಚಿದನು. ಆಗ ಯೆಹೋವ ದೇವರು ಗುಡುಗುಗಳನ್ನೂ ಆಲಿಕಲ್ಲಿನ ಮಳೆಯನ್ನೂ ಸುರಿಸಿದರು. ಸಿಡಿಲು ನೆಲಕ್ಕೆ ಬಡಿಯಿತು. ಸಿಡಿಲಿನ ಆರ್ಭಟದೊಂದಿಗೆ ಯೆಹೋವ ದೇವರು ಈಜಿಪ್ಟ್ ದೇಶದ ಮೇಲೆ ಆಲಿಕಲ್ಲಿನ ಮಳೆಯನ್ನು ಸುರಿಸಿದರು.</verse>
				<verse number="24">ಸಿಡಿಲಿನ ಆರ್ಭಟದೊಂದಿಗೆ ಕಠಿಣವಾದ ಆಲಿಕಲ್ಲಿನ ಮಳೆಯೂ ಸುರಿಯಿತು. ಈಜಿಪ್ಟ್ ಒಂದು ರಾಷ್ಟ್ರವಾದಂದಿನಿಂದ ಅಂಥ ಘೋರವಾದ ಆಲಿಕಲ್ಲಿನ ಮಳೆಯೂ ಆ ದೇಶದಲ್ಲಿ ಆಗಿರಲಿಲ್ಲ.</verse>
				<verse number="25">ಆ ಆಲಿಕಲ್ಲಿನ ಮಳೆಯು ಈಜಿಪ್ಟ್ ದೇಶದಲ್ಲೆಲ್ಲಾ ಮನುಷ್ಯರು ಮೊದಲುಗೊಂಡು ಪಶುಗಳವರೆಗೂ ಹೊಲದಲ್ಲಿ ಇದ್ದದ್ದನ್ನೆಲ್ಲಾ ಹಾಳುಮಾಡಿತು. ಹೊಲದ ಎಲ್ಲಾ ಸೊಪ್ಪನ್ನೂ ಹಾಳು ಮಾಡಿ, ಎಲ್ಲಾ ಮರಗಳನ್ನು ಮುರಿದುಹಾಕಿತು.</verse>
				<verse number="26">ಇಸ್ರಾಯೇಲರು ಇದ್ದ ಗೋಷೆನ್ ಪ್ರಾಂತದಲ್ಲಿ ಆಲಿಕಲ್ಲಿನ ಮಳೆಯು ಇರಲಿಲ್ಲ.</verse>
				<verse number="27">ಆಗ ಫರೋಹನು ಮೋಶೆ ಆರೋನರನ್ನು ಕರೆಕಳುಹಿಸಿ ಅವರಿಗೆ, “ಈ ಸಲ ನಾನು ಪಾಪಮಾಡಿದ್ದೇನೆ, ಯೆಹೋವ ದೇವರು ನೀತಿವಂತನು. ಆದರೆ ನಾನೂ, ನನ್ನ ಜನರೂ ತಪ್ಪಿತಸ್ಥರು.</verse>
				<verse number="28">ಆದ್ದರಿಂದ ಈ ಬಲವಾದ ಗುಡುಗುಗಳೂ ಆಲಿಕಲ್ಲಿನ ಮಳೆಯೂ ಇನ್ನು ಸಾಕು. ಇವುಗಳು ನಿಂತುಹೋಗುವಂತೆ ಯೆಹೋವ ದೇವರನ್ನು ಬೇಡಿಕೊಳ್ಳಿರಿ, ನೀವು ಇನ್ನು ಇಲ್ಲಿ ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು,” ಎಂದನು.</verse>
				<verse number="29">ಮೋಶೆಯು ಅವನಿಗೆ, “ನಾನು ಪಟ್ಟಣವನ್ನು ಬಿಟ್ಟುಹೋದ ಕೂಡಲೇ, ಯೆಹೋವ ದೇವರ ಕಡೆಗೆ ನನ್ನ ಕೈಗಳನ್ನು ಚಾಚಿ ಪ್ರಾರ್ಥಿಸುವೆನು. ಭೂಮಿಯು ಯೆಹೋವ ದೇವರದೇ ಎಂದು ನೀನು ತಿಳಿದುಕೊಳ್ಳುವಂತೆ ಗುಡುಗುಗಳು ನಿಂತುಹೋಗುವುವು. ಆಲಿಕಲ್ಲಿನ ಮಳೆಯು ಇನ್ನು ಇರದು.</verse>
				<verse number="30">ಆದರೂ ನೀನು ಮತ್ತು ನಿನ್ನ ಅಧಿಕಾರಿಗಳು ದೇವರಾದ ಯೆಹೋವ ದೇವರಿಗೆ ಭಯಪಡುವುದಿಲ್ಲವೆಂದು ನಾನು ಬಲ್ಲೆನು,” ಎಂದನು.</verse>
				<verse number="31">ಜವೆಗೋಧಿಗೆ ತೆನೆಯೂ ಅಗಸೆಯ ಮೊಗ್ಗುಗಳೂ ಇದ್ದುದರಿಂದ ಅಗಸೆಯೂ ಜವೆಗೋಧಿಯೂ ಹಾಳಾದವು.</verse>
				<verse number="32">ಆದರೆ ಗೋಧಿ ಮತ್ತು ಕಡಲೆ ಬೆಳೆದಿಲ್ಲವಾದ್ದರಿಂದ ಹಾಳಾಗಲಿಲ್ಲ.</verse>
				<verse number="33">ತರುವಾಯ ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದ ಹೊರಗೆ ಬಂದಾಗ, ತನ್ನ ಕೈಗಳನ್ನು ಯೆಹೋವ ದೇವರ ಕಡೆಗೆ ಚಾಚಿದನು. ಆಗ ಗುಡುಗುಗಳೂ ಆಲಿಕಲ್ಲಿನ ಮಳೆಯೂ ನಿಂತುಹೋದವು. ಇನ್ನು ಮಳೆಯು ಭೂಮಿಯ ಮೇಲೆ ಬೀಳಲಿಲ್ಲ.</verse>
				<verse number="34">ಮಳೆ, ಆಲಿಕಲ್ಲಿನ ಮಳೆ, ಗುಡುಗುಗಳು ನಿಂತುಹೋದದ್ದನ್ನು ಫರೋಹನು ನೋಡಿದಾಗ, ಅವನು ಪುನಃ ಪಾಪಮಾಡಿದನು. ತನ್ನ ಅಧಿಕಾರಿಗಳ ಸಹಿತವಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.</verse>
				<verse number="35">ಫರೋಹನ ಹೃದಯವು ಕಠಿಣವಾಯಿತು. ಯೆಹೋವ ದೇವರು ಮೋಶೆಗೆ ಹೇಳಿದಂತೆ, ಅವನು ಇಸ್ರಾಯೇಲರನ್ನು ಕಳುಹಿಸಲೇ ಇಲ್ಲ.</verse>
			</chapter>
			<chapter number="10">
				<verse number="1">ತರುವಾಯ ಯೆಹೋವ ದೇವರು ಮೋಶೆಗೆ, “ಫರೋಹನ ಬಳಿಗೆ ಹೋಗು, ಏಕೆಂದರೆ ನಾನು ನನ್ನ ಅದ್ಭುತ ಸೂಚಕಕಾರ್ಯಗಳನ್ನು ಅವನ ಮುಂದೆ ತೋರಿಸುವುದಕ್ಕಾಗಿ ಅವನ ಹೃದಯವನ್ನೂ ಅವನ ಅಧಿಕಾರಿಗಳ ಹೃದಯಗಳನ್ನೂ ಕಠಿಣ ಮಾಡಿದ್ದೇನೆ.</verse>
				<verse number="2">ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಈಜಿಪ್ಟಿನಲ್ಲಿ ಏನು ಮಾಡಿದೆನೆಂದೂ, ನಾನೇ ಯೆಹೋವ ದೇವರೆಂದೂ ನೀವು ತಿಳಿದುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಅದ್ಭುತ ಸೂಚಕಕಾರ್ಯಗಳನ್ನು ತಿಳಿಸಬೇಕು,” ಎಂದು ಹೇಳಿದರು.</verse>
				<verse number="3">ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ, “ಹಿಬ್ರಿಯರ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನನ್ನ ಸನ್ನಿಧಿಯಲ್ಲಿ ನೀನು ಎಷ್ಟು ಕಾಲ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸುವಂತೆ ನನ್ನ ಜನರನ್ನು ಹೋಗಗೊಡಿಸು.</verse>
				<verse number="4">ನೀನು ನನ್ನ ಜನರನ್ನು ಹೋಗಗೊಡಿಸದಿದ್ದರೆ, ನಾಳೆಯೇ ನಾನು ನಿನ್ನ ರಾಜ್ಯದಲ್ಲಿ ಮಿಡತೆಗಳನ್ನು ಬರಮಾಡುವೆನು.</verse>
				<verse number="5">ಒಬ್ಬನು ಭೂಮಿಯನ್ನು ಕಾಣುವುದಕ್ಕಾಗದಷ್ಟು ಅವು ಭೂಮಿಯನ್ನೆಲ್ಲಾ ಮುಚ್ಚಿಕೊಳ್ಳುವುವು. ಇದಲ್ಲದೆ ಅವು ಆಲಿಕಲ್ಲಿನ ಮಳೆಯಿಂದ ಹಾಳಾಗದೆ ನಿಮಗಾಗಿ ಉಳಿದಿರುವುದೆಲ್ಲವನ್ನೂ, ಹೊಲಗಳಲ್ಲಿ ಚಿಗುರಿರುವ ಪ್ರತಿಯೊಂದು ಮರವನ್ನೂ ತಿಂದುಬಿಡುವುವು.</verse>
				<verse number="6">ಅವು ನಿನ್ನ ಮನೆಗಳಲ್ಲಿಯೂ ನಿನ್ನ ಅಧಿಕಾರಿಗಳ ಮನೆಗಳಲ್ಲಿಯೂ ಈಜಿಪ್ಟಿನ ಎಲ್ಲಾ ಮನೆಗಳಲ್ಲಿಯೂ ತುಂಬಿಕೊಳ್ಳುವುವು. ನಿನ್ನ ತಂದೆ ಅಲ್ಲದೆ ನಿನ್ನ ತಂದೆಯ ತಂದೆಗಳಾಗಲಿ, ಭೂಮಿಯ ಮೇಲೆ ಇದ್ದಂದಿನಿಂದ ಇಂದಿನವರೆಗೂ ಅಂಥ ಮಿಡತೆಯ ದಂಡನ್ನು ಯಾರೂ ನೋಡಿಲ್ಲ,’ ” ಎಂದು ಮೋಶೆ ಹೇಳಿ ಫರೋಹನ ಬಳಿಯಿಂದ ಹೊರಟುಹೋದನು.</verse>
				<verse number="7">ಫರೋಹನ ಅಧಿಕಾರಿಗಳು ಅವನಿಗೆ, “ಇವನು ಎಷ್ಟು ಕಾಲ ನಮಗೆ ಉರುಲಾಗಿರಬೇಕು. ಆ ಜನರು ತಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡುವಂತೆ ಅವರನ್ನು ಕಳುಹಿಸಿಬಿಡು. ಈಜಿಪ್ಟ್ ನಾಶವಾಯಿತೆಂದು ನಿನಗೆ ಇನ್ನೂ ತಿಳಿಯಲಿಲ್ಲವೋ?” ಎಂದರು.</verse>
				<verse number="8">ಆದುದರಿಂದ ಫರೋಹನು ಮೋಶೆ ಮತ್ತು ಆರೋನರನ್ನು ಪುನಃ ಕರೆಯಿಸಿ ಅವರಿಗೆ, “ನೀವು ಹೋಗಿ ನಿಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡಿರಿ, ಆದರೆ ಹೋಗುವವರು ಯಾರ‍್ಯಾರು?” ಎಂದು ಕೇಳಿದನು.</verse>
				<verse number="9">ಅದಕ್ಕೆ ಮೋಶೆಯು ಅವನಿಗೆ, “ನಮ್ಮ ಚಿಕ್ಕವರನ್ನೂ ವೃದ್ಧರನ್ನೂ ಕರೆದುಕೊಂಡು ಹೋಗುತ್ತೇವೆ. ಇದಲ್ಲದೆ ನಮ್ಮ ಪುತ್ರಪುತ್ರಿಯರನ್ನೂ ನಮ್ಮ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ. ಏಕೆಂದರೆ ನಾವು ಯೆಹೋವ ದೇವರಿಗಾಗಿ ಹಬ್ಬವನ್ನು ಮಾಡಬೇಕು,” ಎಂದನು.</verse>
				<verse number="10">ಫರೋಹನು ಅವರಿಗೆ, “ನಾನು ನಿಮ್ಮ ಮಡದಿ ಮಕ್ಕಳನ್ನೂ ಕಳುಹಿಸಿಕೊಟ್ಟು, ಯೆಹೋವ ದೇವರು ನಿಮ್ಮ ಸಂಗಡ ಇರಲಿ ಎಂದು ನಾನು ಹೇಳಬಯಸುವಿರೋ? ಇಲ್ಲಾ! ನೀವು ಕೇಡು ಮಾಡಲು ನಿರ್ಧರಿಸಿರುವಿರಿ?</verse>
				<verse number="11">ಹಾಗೆ ಮಾಡದೆ, ಗಂಡಸರಾದ ನೀವು ಮಾತ್ರ ಹೋಗಿ ಯೆಹೋವ ದೇವರಿಗೆ ಆರಾಧನೆ ಮಾಡಿರಿ, ಏಕೆಂದರೆ ಇದನ್ನೇ ನೀವು ಬಯಸಿದಿರಿ,” ಎಂದನು. ತರುವಾಯ ಫರೋಹನು ಅವರನ್ನು ತನ್ನ ಸನ್ನಿಧಿಯಿಂದ ಹೊರಡಿಸಿಬಿಟ್ಟನು.</verse>
				<verse number="12">ಆಗ ಯೆಹೋವ ದೇವರು ಮೋಶೆಗೆ, “ಮಿಡತೆಗಳಿಗಾಗಿ ನಿನ್ನ ಕೈಯನ್ನು ಈಜಿಪ್ಟಿನ ಮೇಲೆ ಚಾಚು. ಅವು ಈಜಿಪ್ಟಿನ ಮೇಲೆ ಬಂದು, ಆಲಿಕಲ್ಲಿನ ಮಳೆಯು ದೇಶದಲ್ಲಿ ಉಳಿಸಿದ ಹಸುರಾದದ್ದನ್ನೆಲ್ಲಾ ತಿಂದುಬಿಡಲಿ,” ಎಂದರು.</verse>
				<verse number="13">ಮೋಶೆಯು ತನ್ನ ಕೋಲನ್ನು ಈಜಿಪ್ಟ್ ದೇಶದ ಮೇಲೆ ಚಾಚಿದಾಗ, ಯೆಹೋವ ದೇವರು ಹಗಲಲ್ಲೂ ರಾತ್ರಿಯಲ್ಲೂ ಪೂರ್ವದಿಕ್ಕಿನಿಂದ ಗಾಳಿಯನ್ನು ಬರಮಾಡಿದರು. ಉದಯವಾದಾಗ ಆ ಗಾಳಿಯು ಮಿಡತೆಗಳನ್ನು ಅಟ್ಟಿಕೊಂಡು ಬಂದಿತು.</verse>
				<verse number="14">ಹೀಗೆ ಮಿಡತೆಗಳ ಉಪದ್ರವ ಈಜಿಪ್ಟ್ ದೇಶದಲ್ಲೆಲ್ಲಾ ಬಂದು, ಈಜಿಪ್ಟಿನ ಎಲ್ಲಾ ಮೇರೆಗಳಲ್ಲಿ ದೊಡ್ಡ ಸಮೂಹವಾಗಿ ಸೇರಿಕೊಂಡವು. ಅವುಗಳಂಥವು ಹಿಂದೆ ಎಂದಿಗೂ ಇರಲಿಲ್ಲ, ಅನಂತರವೂ ಇರಲಾರವು.</verse>
				<verse number="15">ಏಕೆಂದರೆ ಅವು ಭೂಮಿಯನ್ನೆಲ್ಲಾ ಮುತ್ತಿಕೊಂಡದ್ದರಿಂದ, ಆ ದೇಶದಲ್ಲಿ ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ, ಆಲಿಕಲ್ಲಿನ ಮಳೆಯು ಉಳಿಸಿದ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾಗಲಿ, ಹೊಲದ ಗಿಡಗಳಲ್ಲಾಗಲಿ ಹಸುರಾದದ್ದು ಈಜಿಪ್ಟ್ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.</verse>
				<verse number="16">ಆಗ ಫರೋಹನು ಮೋಶೆ ಆರೋನರನ್ನು ತ್ವರೆಯಾಗಿ ಕರೆಯಿಸಿ ಅವರಿಗೆ, “ನಾನು ನಿಮ್ಮ ದೇವರಾದ ಯೆಹೋವ ದೇವರಿಗೂ, ನಿಮಗೂ ವಿರೋಧವಾಗಿ ಪಾಪಮಾಡಿದ್ದೇನೆ.</verse>
				<verse number="17">ಹೀಗಿರುವುದರಿಂದ ಈಗ ಒಂದೇ ಸಾರಿ ಮಾತ್ರ ನನ್ನ ಪಾಪವನ್ನು ಕ್ಷಮಿಸಬೇಕು. ಈ ಮರಣಕರವಾದ ಉಪದ್ರವವನ್ನು ನನ್ನಿಂದ ತೊಲಗಿಸುವಂತೆ ನಿಮ್ಮ ದೇವರಾದ ಯೆಹೋವ ದೇವರನ್ನು ಬೇಡಿಕೊಳ್ಳಿರಿ,” ಎಂದನು.</verse>
				<verse number="18">ಆಗ ಮೋಶೆ ಫರೋಹನನ್ನು ಬಿಟ್ಟು ಹೋಗಿ ಯೆಹೋವ ದೇವರನ್ನು ಬೇಡಿಕೊಂಡನು.</verse>
				<verse number="19">ಯೆಹೋವ ದೇವರು ಬಲವಾದ ಪಶ್ಚಿಮ ಗಾಳಿಯನ್ನು ಬೀಸುವಂತೆ ಮಾಡಿದರು. ಅದು ಮಿಡತೆಗಳನ್ನು ಎತ್ತಿಕೊಂಡು ಹೋಗಿ ಕೆಂಪು ಸಮುದ್ರದಲ್ಲಿ ಹಾಕಿತು. ಈಜಿಪ್ಟ್ ಮೇರೆಗಳಲ್ಲೆಲ್ಲಾ ಒಂದು ಮಿಡತೆಯಾದರೂ ಉಳಿಯಲಿಲ್ಲ.</verse>
				<verse number="20">ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ, ಅವನು ಇಸ್ರಾಯೇಲರನ್ನು ಕಳುಹಿಸದೆ ಹೋದನು.</verse>
				<verse number="21">ಆಗ ಯೆಹೋವ ದೇವರು ಮೋಶೆಗೆ, “ಈಜಿಪ್ಟ್ ದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು,” ಎಂದರು.</verse>
				<verse number="22">ಮೋಶೆಯು ಆಕಾಶದ ಕಡೆಗೆ ಕೈಚಾಚಿದಾಗ, ಈಜಿಪ್ಟ್ ದೇಶದಲ್ಲೆಲ್ಲಾ ಮೂರು ದಿನಗಳವರೆಗೆ ಘೋರವಾದ ಕತ್ತಲೆ ಕವಿಯಿತು.</verse>
				<verse number="23">ಮೂರು ದಿನಗಳವರೆಗೆ ಅವರು ಒಬ್ಬರನ್ನೊಬ್ಬರು ನೋಡಲಾಗಲಿಲ್ಲ. ಯಾರೂ ತಮ್ಮ ಸ್ಥಳವನ್ನು ಬಿಟ್ಟು ಏಳಲಿಲ್ಲ. ಆದರೆ ಇಸ್ರಾಯೇಲರಿಗೆಲ್ಲಾ ಅವರು ವಾಸಿಸುವ ಸ್ಥಳದಲ್ಲಿ ಅವರಿಗೆ ಬೆಳಕಿತ್ತು.</verse>
				<verse number="24">ಆಗ ಫರೋಹನು ಮೋಶೆಯನ್ನು ಕರೆಯಿಸಿ ಅವನಿಗೆ, “ನೀವು ಹೋಗಿ ಯೆಹೋವ ದೇವರಿಗೆ ಆರಾಧನೆ ಮಾಡಿರಿ. ನಿಮ್ಮ ಕುರಿದನಗಳು ಮಾತ್ರ ಇಲ್ಲಿರಲಿ. ನಿಮ್ಮ ಮಡದಿ ಮಕ್ಕಳೂ ನಿಮ್ಮ ಸಂಗಡ ಹೋಗಲಿ,” ಎಂದನು.</verse>
				<verse number="25">ಅದಕ್ಕೆ ಮೋಶೆಯು ಅವನಿಗೆ, “ನಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸುವುದಕ್ಕಾಗಿ ಯಜ್ಞಗಳನ್ನೂ ದಹನಬಲಿಗಳನ್ನೂ ತೆಗೆದುಕೊಂಡು ಹೋಗಲು ಅಪ್ಪಣೆಬೇಕು.</verse>
				<verse number="26">ನಮ್ಮ ಪಶುಪ್ರಾಣಿಗಳನ್ನೂ ನಾವು ನಮ್ಮ ಸಂಗಡ ತೆಗೆದುಕೊಂಡು ಹೋಗುವೆವು. ಒಂದು ಗೊರಸನ್ನೂ ಬಿಡಲಾರೆವು. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡುವುದಕ್ಕೆ ಅವುಗಳಿಂದಲೇ ಬಲಿ ಅರ್ಪಿಸಬೇಕು. ಯೆಹೋವ ದೇವರಿಗೆ ಯಾವ ಅರ್ಪಣೆ ಮಾಡಬೇಕೆಂಬುದು ಅಲ್ಲಿಗೆ ಹೋಗುವವರೆಗೂ ನಮಗೆ ತಿಳಿಯದು,” ಎಂದನು.</verse>
				<verse number="27">ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ, ಅವನು ಅವರನ್ನು ಕಳುಹಿಸಲಾರದೆ ಹೋದನು.</verse>
				<verse number="28">ಆಗ ಫರೋಹನು ಮೋಶೆಗೆ, “ನನ್ನನ್ನು ಬಿಟ್ಟು ಹೋಗು. ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರ. ಏಕೆಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ಸಾಯುವೆ,” ಎಂದನು.</verse>
				<verse number="29">ಮೋಶೆಯು ಅವನಿಗೆ, “ನೀನು ಸರಿಯಾಗಿ ಹೇಳಿದ್ದೀ. ಇನ್ನು ಮೇಲೆ ನಾನು ನಿನ್ನ ಮುಖವನ್ನು ನೋಡುವುದಿಲ್ಲ,” ಎಂದನು.</verse>
			</chapter>
			<chapter number="11">
				<verse number="1">ಯೆಹೋವ ದೇವರು ಮೋಶೆಗೆ, “ಇನ್ನು ಒಂದೇ ಉಪದ್ರವವನ್ನು ಫರೋಹನ ಮೇಲೆಯೂ, ಈಜಿಪ್ಟ್ ಮೇಲೆಯೂ ಬರಮಾಡುವೆನು. ಆಮೇಲೆ ಅವನು ಇಲ್ಲಿಂದ ಕಳುಹಿಸುವನು. ಇಲ್ಲಿಂದ ನಿಮ್ಮನ್ನು ನಿಶ್ಚಯವಾಗಿ ಬಲವಂತದಿಂದ ಎಲ್ಲರನ್ನೂ ಕಳುಹಿಸಿಬಿಡುವನು.</verse>
				<verse number="2">ಆದ್ದರಿಂದ ಸ್ತ್ರೀಪುರುಷರೆಲ್ಲರು ತನ್ನ ನೆರೆಯವನಿಂದಲೂ ಬೆಳ್ಳಿಬಂಗಾರ ಒಡವೆಗಳನ್ನು ಕೇಳಿಕೊಳ್ಳಬೇಕೆಂದು ಇಸ್ರಾಯೇಲರಿಗೆ ಹೇಳು,” ಎಂದು ಹೇಳಿದರು.</verse>
				<verse number="3">ಇದಲ್ಲದೆ ಯೆಹೋವ ದೇವರು ಈಜಿಪ್ಟಿನವರ ದೃಷ್ಟಿಯಲ್ಲಿ ಜನರಿಗೆ ದಯೆ ದೊರಕುವಂತೆ ಮಾಡಿದರು. ಇದಲ್ಲದೆ ಮೋಶೆಯು ಈಜಿಪ್ಟ್ ದೇಶದಲ್ಲಿಯೂ ಫರೋಹನ ಅಧಿಕಾರಿಗಳ ದೃಷ್ಟಿಯಲ್ಲಿಯೂ ಜನರ ದೃಷ್ಟಿಯಲ್ಲಿಯೂ ಬಹಳ ಗೌರವ ಹೊಂದಿದನು.</verse>
				<verse number="4">ಆಗ ಮೋಶೆಯು ಫರೋಹನಿಗೆ, “ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಸುಮಾರು ಮಧ್ಯರಾತ್ರಿಯಲ್ಲಿ ನಾನು ಈಜಿಪ್ಟಿನ ಮಧ್ಯದಲ್ಲಿ ಹಾದು ಹೋಗುವೆನು.</verse>
				<verse number="5">ಆಗ ಈಜಿಪ್ಟ್ ದೇಶದ ಚೊಚ್ಚಲ ಮಕ್ಕಳು ಅಂದರೆ, ಸಿಂಹಾಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲನ್ನು ಹಿಡಿದಿರುವ ದಾಸಿಯ ಚೊಚ್ಚಲ ಮಗನವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವೂ ಸಾಯುವುವು.</verse>
				<verse number="6">ಈಜಿಪ್ಟ್ ದೇಶದಲ್ಲೆಲ್ಲಾ ದೊಡ್ಡ ಗೋಳಾಟವಿರುವುದು. ಅಂಥಾ ಗೋಳಾಟವು ಹಿಂದೆಯೂ ಇರಲಿಲ್ಲ, ಇನ್ನು ಮುಂದೆಯೂ ಇರುವುದಿಲ್ಲ.</verse>
				<verse number="7">ಆದರೆ ಯೆಹೋವ ದೇವರು ಈಜಿಪ್ಟಿನವರಿಗೂ, ಇಸ್ರಾಯೇಲರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳುಕೊಳ್ಳುವಂತೆ, ಇಸ್ರಾಯೇಲಿನವರ ವಿರುದ್ಧ ಇಲ್ಲವೆ ಪ್ರಾಣಿಗಳ ವಿರುದ್ಧ ಒಂದು ನಾಯಿ ಸಹ ಬೊಗಳುವುದಿಲ್ಲ.’</verse>
				<verse number="8">ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು, ನನಗೆ ಅಡ್ಡಬಿದ್ದು, ನನಗೆ ನೀನೂ, ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ, ‘ಹೊರಗೆ ಹೋಗಿರಿ,’ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು,” ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.</verse>
				<verse number="9">ಆದರೆ ಯೆಹೋವ ದೇವರು ಮೋಶೆಗೆ, “ನನ್ನ ಅದ್ಭುತಗಳು ಈಜಿಪ್ಟ್ ದೇಶದಲ್ಲಿ ಹೆಚ್ಚಾಗುವಂತೆ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ,” ಎಂದರು.</verse>
				<verse number="10">ಈ ಅದ್ಭುತಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ, ಅವನು ಇಸ್ರಾಯೇಲರನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.</verse>
			</chapter>
			<chapter number="12">
				<verse number="1">ಯೆಹೋವ ದೇವರು ಈಜಿಪ್ಟಿನಲ್ಲಿ ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="2">“ಎಲ್ಲಾ ಮಾಸಗಳಲ್ಲಿ ಇದೇ ನಿಮಗೆ ಆದಿಮಾಸವಾಗಿರಬೇಕು. ಇದು ನಿಮಗೆ ವರುಷದ ಮೊದಲನೆಯ ತಿಂಗಳಾಗಿರಬೇಕು.</verse>
				<verse number="3">ಇಸ್ರಾಯೇಲ್ ಸಭೆಗೆಲ್ಲಾ ನೀವು ಹೇಳಬೇಕಾದದ್ದೇನೆಂದರೆ, ಈ ತಿಂಗಳಿನ ಹತ್ತನೆಯ ದಿನದಲ್ಲಿ ಅವರು ತಮಗೆ ಪ್ರತಿ ಗೋತ್ರಗಳ ಪ್ರತಿಯೊಂದು ಕುಟುಂಬಕ್ಕೆ ಒಂದರಂತೆ ಕುರಿಮರಿಯನ್ನು ತೆಗೆದುಕೊಳ್ಳಬೇಕು.</verse>
				<verse number="4">ಆ ಕುರಿಮರಿಯನ್ನು ಪೂರ್ತಿಯಾಗಿ ತಿನ್ನುವುದಕ್ಕೆ ಕುಟುಂಬವು ಚಿಕ್ಕದಾಗಿದ್ದರೆ, ತನ್ನ ಮನೆಗೆ ಸಮೀಪವಾಗಿರುವ ತನ್ನ ನೆರೆಯವನ ಕುಟುಂಬದಲ್ಲಿ ಲೆಕ್ಕನೋಡಿ ಅವರೊಂದಿಗೆ ಪಾಲು ಹೊಂದಲಿ. ಒಬ್ಬೊಬ್ಬನು ತಿನ್ನುವ ಅಳತೆಯ ಪ್ರಕಾರ ಕುರಿಮರಿಯನ್ನು ತೆಗೆದುಕೊಳ್ಳಲಿ.</verse>
				<verse number="5">ನೀವು ಆಯ್ದುಕೊಳ್ಳುವ ಕುರಿಮರಿಯು ದೋಷರಹಿತವಾಗಿರುವ ಒಂದು ವರ್ಷದ ಗಂಡುಮರಿಯಾಗಿರಬೇಕು. ನೀವು ಕುರಿಗಳಿಂದಾಗಲಿ, ಆಡುಗಳಿಂದಾಗಲಿ ತೆಗೆದುಕೊಳ್ಳಬಹುದು.</verse>
				<verse number="6">ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಳ್ಳಬೇಕು. ತರುವಾಯ ಸಂಜೆಯಲ್ಲಿ ಇಸ್ರಾಯೇಲಿನ ಜನಾಂಗದವರೆಲ್ಲರೂ ಅವುಗಳನ್ನು ವಧಿಸಬೇಕು.</verse>
				<verse number="7">ಅವರು ರಕ್ತದಲ್ಲಿ ಸ್ವಲ್ಪ ತೆಗೆದು, ಕುರಿಮರಿಯ ಮಾಂಸವನ್ನು ಭೋಜನಮಾಡುವ ಮನೆಗಳ ಬಾಗಿಲಿನ ನಿಲುವು ಪಟ್ಟಿಗಳಿಗೂ, ಮೇಲಿನ ಪಟ್ಟಿಗೂ ಹಚ್ಚಬೇಕು.</verse>
				<verse number="8">ಆ ರಾತ್ರಿಯಲ್ಲಿಯೇ ಮಾಂಸವನ್ನು ಸುಟ್ಟು, ಅದನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು.</verse>
				<verse number="9">ಅದರಲ್ಲಿ ಯಾವುದನ್ನೂ ಹಸಿಯಾದದ್ದನ್ನಾಗಲಿ, ನೀರಿನಲ್ಲಿ ಬೇಯಿಸಿಯಾಗಲಿ ತಿನ್ನದೆ, ಅದರ ತಲೆ, ತೊಡೆ, ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು.</verse>
				<verse number="10">ಅದರಲ್ಲಿ ಬೆಳಗಿನವರೆಗೆ ಏನನ್ನೂ ಉಳಿಸಬಾರದು. ಬೆಳಗಿನವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.</verse>
				<verse number="11">ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು ತ್ವರೆಯಾಗಿ ಅದನ್ನು ತಿನ್ನಬೇಕು, ಅದು ಯೆಹೋವ ದೇವರ ಪಸ್ಕವಾಗಿದೆ.</verse>
				<verse number="12">“ಏಕೆಂದರೆ ನಾನು ಈ ರಾತ್ರಿ ಈಜಿಪ್ಟ್ ದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ, ಪಶುಗಳಲ್ಲಿಯೂ ಇರುವ ಚೊಚ್ಚಲಾದವುಗಳನ್ನು ಸಂಹರಿಸುವೆನು. ಈಜಿಪ್ಟಿನ ದೇವರುಗಳಿಗೆಲ್ಲಾ ನಾನು ನ್ಯಾಯತೀರಿಸುವೆನು. ನಾನೇ ಯೆಹೋವ ದೇವರು.</verse>
				<verse number="13">ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ, ನಿಮ್ಮನ್ನು ದಾಟಿಹೋಗುವೆನು. ಈಜಿಪ್ಟ್ ದೇಶವನ್ನು ನಾನು ಸಂಹರಿಸುವ ಸಮಯದಲ್ಲಿ, ನಿಮ್ಮನ್ನು ನಾಶಮಾಡುವ ಯಾವ ಉಪದ್ರವವು ನಿಮ್ಮ ಮೇಲೆ ಬರುವುದಿಲ್ಲ.</verse>
				<verse number="14">“ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ನೀವು ಅದನ್ನು ಯೆಹೋವ ದೇವರಿಗೆ ಹಬ್ಬವಾಗಿ ತಲತಲಾಂತರಗಳಲ್ಲಿ ಆಚರಿಸಬೇಕು. ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.</verse>
				<verse number="15">ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿ ತಿನ್ನುವವರನ್ನು ಇಸ್ರಾಯೇಲಿನೊಳಗಿಂದ ಬಹಿಷ್ಕರಿಸಬೇಕು.</verse>
				<verse number="16">ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು, ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆ ಸೇರಬೇಕು. ಊಟಕ್ಕೆ ಬೇಕಾದದ್ದನ್ನು ಮಾಡುವುದನ್ನು ಬಿಟ್ಟು, ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡಬಾರದು.</verse>
				<verse number="17">“ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ್ದೇನೆ. ಆದಕಾರಣ ನಿಮ್ಮ ಸಂತತಿಗಳಲ್ಲಿ ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.</verse>
				<verse number="18">ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯಿಂದ ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನ ಸಂಜೆಯವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.</verse>
				<verse number="19">ಏಳು ದಿನಗಳವರೆಗೆ ಹುಳಿ ಹಿಟ್ಟು ನಿಮ್ಮ ಮನೆಗಳಲ್ಲಿ ಸಿಕ್ಕಬಾರದು, ಏಕೆಂದರೆ ಹುಳಿ ಬೆರೆಸಿದ್ದನ್ನು ಯಾರು ತಿನ್ನುವರೋ ಅವರು ಪರದೇಶದವರಾಗಲಿ, ಸ್ವದೇಶದವರಾಗಲಿ ಅವರನ್ನು ಇಸ್ರಾಯೇಲ್ ಸಭೆಯೊಳಗಿಂದ ಬಹಿಷ್ಕರಿಸಬೇಕು.</verse>
				<verse number="20">ಹುಳಿ ಕಲಸಿದ್ದು ಯಾವುದೇ ಆಗಿರಲಿ ನೀವು ತಿನ್ನಬಾರದು. ನಿಮ್ಮ ಎಲ್ಲಾ ನಿವಾಸಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು,” ಎಂದು ಹೇಳಿದರು.</verse>
				<verse number="21">ಆಗ ಮೋಶೆಯು ಇಸ್ರಾಯೇಲಿನ ಎಲ್ಲಾ ಹಿರಿಯರನ್ನು ಕರೆದು ಅವರಿಗೆ, “ನಿಮ್ಮ ಕುಟುಂಬಗಳ ಪ್ರಕಾರ ಕುರಿಗಳನ್ನು ಆಯ್ದುಕೊಂಡು ಪಸ್ಕಹಬ್ಬಕ್ಕಾಗಿ ಕೊಯ್ಯಿರಿ.</verse>
				<verse number="22">ಹಿಸ್ಸೋಪ ಗಿಡದ ಕಟ್ಟನ್ನು ತೆಗೆದುಕೊಂಡು, ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ, ಬಾಗಿಲಿನ ಮೇಲೆ ಅಡ್ಡ ಪಟ್ಟಿಗೂ, ಅದರ ಪಕ್ಕದಲ್ಲಿರುವ ಎರಡು ನಿಲುವು ಕಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವವರೆಗೆ ಮನೆಯ ಬಾಗಿಲನ್ನು ಬಿಟ್ಟುಹೋಗಬಾರದು.</verse>
				<verse number="23">ಏಕೆಂದರೆ ಯೆಹೋವ ದೇವರು ಈಜಿಪ್ಟಿನವರನ್ನು ಸಂಹರಿಸುವುದಕ್ಕಾಗಿ ಹಾದುಹೋಗುವರು. ಅವರು ಅಡ್ಡ ಪಟ್ಟಿಯ ಮೇಲೂ, ಅದರ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ, ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡದಂತೆ, ಯೆಹೋವ ದೇವರು ನಿಮ್ಮ ಬಾಗಿಲುಗಳನ್ನು ದಾಟಿಹೋಗುವರು.</verse>
				<verse number="24">“ಇದನ್ನು ಒಂದು ಶಾಸನವಾಗಿ ನೀವೂ, ನಿಮ್ಮ ಪುತ್ರರೂ ಸದಾಕಾಲಕ್ಕೂ ಆಚರಿಸತಕ್ಕದ್ದು.</verse>
				<verse number="25">ಯೆಹೋವ ದೇವರು ಕೊಡುವೆನೆಂದು ಪ್ರಮಾಣ ಮಾಡಿದ ದೇಶಕ್ಕೆ ನೀವು ಬಂದಾಗ, ಈ ಆಚರಣೆಯನ್ನು ನೀವು ಕೈಗೊಳ್ಳಬೇಕು.</verse>
				<verse number="26">ನಿಮ್ಮ ಮಕ್ಕಳು, ‘ಈ ಆಚರಣೆಯ ಅರ್ಥವೇನು?’ ಎಂದು ಕೇಳಿದಾಗ,</verse>
				<verse number="27">ನೀವು ಅವರಿಗೆ, ‘ಯೆಹೋವ ದೇವರು ಈಜಿಪ್ಟ್ ದೇಶದಲ್ಲಿ ಈಜಿಪ್ಟಿನವರನ್ನು ಸಂಹರಿಸಿ, ನಮ್ಮ ಮನೆಗಳನ್ನು ಕಾಪಾಡುವುದಕ್ಕಾಗಿ ಇಸ್ರಾಯೇಲರ ಮನೆಗಳನ್ನು ದಾಟಿಹೋದ ಯೆಹೋವ ದೇವರ ಪಸ್ಕ ಬಲಿಯ ಆಚರಣೆಯನ್ನು ನಡೆಸುತ್ತಿದ್ದೇವೆ,’ ಎಂದು ನೀವು ಹೇಳಬೇಕು,” ಎಂದನು. ಆಗ ಜನರು ತಲೆಬಾಗಿಸಿ ಆರಾಧಿಸಿದರು.</verse>
				<verse number="28">ಯೆಹೋವ ದೇವರು ಮೋಶೆ ಆರೋನರಿಗೆ ಆಜ್ಞಾಪಿಸಿದ ಮೇರೆಗೆ ಇಸ್ರಾಯೇಲರು ಮಾಡಿದರು.</verse>
				<verse number="29">ಮಧ್ಯರಾತ್ರಿಯಲ್ಲಿ ಸಿಂಹಾಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು, ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಎಂದರೆ ಈಜಿಪ್ಟ್ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ, ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಯೆಹೋವ ದೇವರು ಸಂಹರಿಸಿದರು.</verse>
				<verse number="30">ಆಗ ಫರೋಹನೂ, ಅವನ ಎಲ್ಲಾ ಅಧಿಕಾರಿಗಳೂ, ಎಲ್ಲಾ ಈಜಿಪ್ಟಿನವರೂ ರಾತ್ರಿಯಲ್ಲಿ ಎದ್ದರು. ಆ ಈಜಿಪ್ಟಿನಲ್ಲಿ ದೊಡ್ಡ ಗೋಳಾಟವಾಯಿತು. ಏಕೆಂದರೆ ಅಲ್ಲಿ ಸತ್ತವರು ಇಲ್ಲದ ಒಂದು ಮನೆಯಾದರೂ ಇರಲಿಲ್ಲ.</verse>
				<verse number="31">ಫರೋಹನು ರಾತ್ರಿಯಲ್ಲಿ ಮೋಶೆ ಆರೋನರನ್ನು ಕರೆಯಿಸಿ ಅವರಿಗೆ, “ನೀವು ಮತ್ತು ಇಸ್ರಾಯೇಲರೆಲ್ಲರೂ ಎದ್ದು ನನ್ನ ಜನರೊಳಗಿಂದ ಹೊರಟು ಹೋಗಿರಿ. ನೀವು ಹೇಳಿದ ಹಾಗೆಯೇ, ಯೆಹೋವ ದೇವರನ್ನು ಆರಾಧಿಸುವುದಕ್ಕೆ ಹೊರಟುಹೋಗಿರಿ.</verse>
				<verse number="32">ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ,” ಎಂದನು.</verse>
				<verse number="33">ಇದಲ್ಲದೆ ಈಜಿಪ್ಟಿನವರು, “ನಾವೆಲ್ಲರೂ ಸಾಯುತ್ತೇವೆ,” ಎಂದು ಹೇಳಿ, ಅವರನ್ನು ತ್ವರೆಯಾಗಿ ದೇಶದೊಳಗಿಂದ ಕಳುಹಿಸಿಬಿಡುವ ಹಾಗೆ ಜನರನ್ನು ಒತ್ತಾಯಮಾಡಿದರು.</verse>
				<verse number="34">ಆದ್ದರಿಂದ ಜನರು ಹಿಟ್ಟಿಗೆ ಹುಳಿ ಹಾಕುವುದಕ್ಕಿಂತ ಮುಂಚೆ, ಅಡಿಗೆ ಮಾಡುವ ಪಾತ್ರೆಗಳ ಸಂಗಡ ಬಟ್ಟೆಗಳಲ್ಲಿ ಕಟ್ಟಿ, ಹೆಗಲಿನ ಮೇಲೆ ಹೊತ್ತುಕೊಂಡು ಹೋದರು.</verse>
				<verse number="35">ಇಸ್ರಾಯೇಲರು ಮೋಶೆಯು ಹೇಳಿದಂತೆ ಮಾಡಿ, ಬೆಳ್ಳಿಬಂಗಾರದ ಒಡವೆಗಳನ್ನೂ, ಬಟ್ಟೆಗಳನ್ನೂ ಈಜಿಪ್ಟಿನವರಿಂದ ಕೇಳಿ ಪಡೆದರು.</verse>
				<verse number="36">ಯೆಹೋವ ದೇವರು ಈಜಿಪ್ಟಿನವರ ಎದುರಿನಲ್ಲಿ ಜನರ ಮೇಲೆ ದಯೆ ತೋರಿಸಿದ್ದರಿಂದ, ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಈಜಿಪ್ಟಿನವರ ಸೊತ್ತನ್ನು ಸುಲಿದುಕೊಂಡರು.</verse>
				<verse number="37">ಆಗ ಇಸ್ರಾಯೇಲರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಜನರು ಕಾಲುನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣಮಾಡಿದರು.</verse>
				<verse number="38">ಬೇರೆ ಜನಸಮೂಹವೂ ಕುರಿದನ ಮೊದಲಾದ ಪಶುಗಳ ಬಹುದೊಡ್ಡ ಹಿಂಡೂ ಇಸ್ರಾಯೇಲರ ಸಂಗಡ ಹೋದವು.</verse>
				<verse number="39">ಆಗ ಅವರು ಈಜಿಪ್ಟಿನಿಂದ ತಂದಿದ್ದ ನಾದಿದ ಹಿಟ್ಟು ಇನ್ನೂ ಹುಳಿಯಾಗದ ಕಾರಣ, ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿದರು. ಏಕೆಂದರೆ ಅವರನ್ನು ಅಲ್ಲಿ ನಿಲ್ಲಗೊಡದೆ ಈಜಿಪ್ಟಿನಿಂದ ಓಡಿಸಿಬಿಟ್ಟಿದ್ದರು. ಅವರು ತಮಗಾಗಿ ಯಾವ ಆಹಾರವನ್ನೂ ಸಿದ್ಧಪಡಿಸಿಕೊಂಡಿರಲಿಲ್ಲ.</verse>
				<verse number="40">ಇಸ್ರಾಯೇಲರು ಈಜಿಪ್ಟಿನಲ್ಲಿ ಪ್ರವಾಸವಾಗಿ ವಾಸಮಾಡಿದ್ದ ಕಾಲವು ನಾನೂರ ಮೂವತ್ತು ವರ್ಷಗಳಾಗಿದ್ದವು.</verse>
				<verse number="41">ನಾನೂರ ಮೂವತ್ತು ವರ್ಷಗಳು ತೀರಿದ ತರುವಾಯ, ಅದೇ ದಿನದಲ್ಲಿ ಯೆಹೋವ ದೇವರ ಸೈನ್ಯಗಳೆಲ್ಲಾ ಈಜಿಪ್ಟ್ ದೇಶವನ್ನು ಬಿಟ್ಟು ಹೊರಗೆ ಹೋದವು.</verse>
				<verse number="42">ದೇವರು ಈಜಿಪ್ಟ್ ದೇಶದಿಂದ ಅವರನ್ನು ಹೊರಗೆ ತಂದ ಕಾರಣ, ಇದು ಯೆಹೋವ ದೇವರಿಗೆ ಆಚರಿಸಬೇಕಾದ ರಾತ್ರಿಯಾಗಿತ್ತು. ಇಸ್ರಾಯೇಲರು ತಮ್ಮ ಸಂತತಿಗಳಲ್ಲಿ ಯೆಹೋವ ದೇವರಿಗೆ ಆಚರಿಸಬೇಕಾದ ರಾತ್ರಿಯು ಇದೇ.</verse>
				<verse number="43">ಯೆಹೋವ ದೇವರು ಮೋಶೆ ಆರೋನರಿಗೆ, “ಪಸ್ಕದ ಶಾಸನವು ಇದೆ: “ವಿದೇಶಿಯರಲ್ಲಿ ಯಾರೂ ಪಸ್ಕಭೋಜನವನ್ನು ತಿನ್ನಬಾರದು.</verse>
				<verse number="44">ಆದರೆ ಕ್ರಯಕ್ಕೆ ತೆಗೆದುಕೊಂಡ ಪ್ರತಿಯೊಬ್ಬ ಗುಲಾಮನು ಸುನ್ನತಿ ಮಾಡಿಸಿಕೊಂಡ ತರುವಾಯ, ಅಂಥವನು ಅದನ್ನು ತಿನ್ನಬಹುದು.</verse>
				<verse number="45">ಪರದೇಶದವರೂ, ಕೂಲಿಯವರೂ, ಅದನ್ನು ತಿನ್ನಬಾರದು.</verse>
				<verse number="46">“ಒಂದೇ ಮನೆಯಲ್ಲಿ ಅದನ್ನು ತಿನ್ನಬೇಕು. ಆ ಮಾಂಸದಲ್ಲಿ ಸ್ವಲ್ಪ ಅಂಶವನ್ನಾದರೂ ಮನೆಯ ಹೊರಗೆ ತೆಗೆದುಕೊಂಡು ಹೋಗಬಾರದು. ಪಶುವಿನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು.</verse>
				<verse number="47">ಇಸ್ರಾಯೇಲಿನ ಸಮೂಹದಲ್ಲಿರುವವರೆಲ್ಲರೂ ಇದನ್ನು ಆಚರಿಸಬೇಕು.</verse>
				<verse number="48">“ನಿಮ್ಮ ಜೊತೆಯಲ್ಲಿ ವಾಸಮಾಡಿದ ಪರದೇಶದವನು ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಬೇಕೆಂದಿದ್ದರೆ, ಅವನ ಗಂಡಸರೆಲ್ಲಾ ಸುನ್ನತಿ ಮಾಡಿಸಿಕೊಳ್ಳಲಿ. ತರುವಾಯ ಅವನು ಅದನ್ನು ಆಚರಿಸುವುದಕ್ಕೆ ಸಮೀಪಬರಲಿ, ಅಂಥವರು ಸ್ವದೇಶದಲ್ಲಿ ಹುಟ್ಟಿದವರಂತೆ ಇರುವರು. ಆದರೆ ಸುನ್ನತಿ ಮಾಡಿಸಿಕೊಳ್ಳದ ಒಬ್ಬನಾದರೂ ಅದನ್ನು ತಿನ್ನಬಾರದು.</verse>
				<verse number="49">ಸ್ವದೇಶದಲ್ಲಿ ಹುಟ್ಟಿದವನಿಗೂ, ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯನಿಗೂ ಒಂದೇ ನಿಯಮವಿರಲಿ,” ಎಂದು ಹೇಳಿದರು.</verse>
				<verse number="50">ಇಸ್ರಾಯೇಲರೆಲ್ಲಾ ಯೆಹೋವ ದೇವರು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಮಾಡಿದರು.</verse>
				<verse number="51">ಅದೇ ದಿನದಲ್ಲಿ ಯೆಹೋವ ದೇವರು ಇಸ್ರಾಯೇಲರನ್ನು ಅವರ ಸೈನ್ಯಗಳ ಪ್ರಕಾರ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದರು.</verse>
			</chapter>
			<chapter number="13">
				<verse number="1">ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,</verse>
				<verse number="2">“ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಮೀಸಲಾಗಿಡು. ಮನುಷ್ಯರಾಗಿರಲಿ, ಪಶುಪ್ರಾಣಿಗಳಾಗಿರಲಿ ಪ್ರಥಮ ಗರ್ಭಫಲವು ನನ್ನದಾಗಿದೆ,” ಎಂದರು.</verse>
				<verse number="3">ಆಗ ಮೋಶೆಯು ಜನರಿಗೆ, “ನೀವು ಈಜಿಪ್ಟಿನ ದಾಸತ್ವದಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಅಲ್ಲಿಂದ ಹೊರಗೆ ಬರಮಾಡಿದ್ದಾರೆ. ಹೀಗಿರುವುದರಿಂದ ಈ ದಿನ ನೀವು ಹುಳಿರೊಟ್ಟಿಯನ್ನು ತಿನ್ನಬಾರದು.</verse>
				<verse number="4">ಅಬೀಬ ತಿಂಗಳಿನ ಈ ದಿನದಲ್ಲಿ ನೀವು ಹೊರಗೆ ಬಂದಿದ್ದೀರಿ.</verse>
				<verse number="5">ಆದ್ದರಿಂದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರ, ಹಿತ್ತಿಯರ, ಅಮೋರಿಯರ, ಹಿವ್ವಿಯರ, ಯೆಬೂಸಿಯರ ದೇಶಕ್ಕೆ ನಿಮ್ಮನ್ನು ಕರೆತಂದು ಅದನ್ನು ನಿಮಗೆ ಕೊಟ್ಟಾಗ ಈ ಹಬ್ಬವನ್ನು ಈ ತಿಂಗಳಲ್ಲಿ ಆಚರಿಸಬೇಕು.</verse>
				<verse number="6">ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನಬೇಕು. ಏಳನೆಯ ದಿನದಲ್ಲಿ ಯೆಹೋವ ದೇವರಿಗೆ ಹಬ್ಬವನ್ನಾಚರಿಸಬೇಕು.</verse>
				<verse number="7">ಆ ಏಳು ದಿನಗಳಲ್ಲಿ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಅಲ್ಲದೆ ನಿಮ್ಮ ಬಳಿಯಲ್ಲಿ ಹುಳಿಯಾಗಲಿ ಇಲ್ಲವೆ ಹುಳಿಹಿಟ್ಟಾಗಲಿ ನಿಮ್ಮ ಯಾವ ಮೇರೆಯಲ್ಲೂ ಕಾಣಬಾರದು.</verse>
				<verse number="8">ಆ ದಿನದಲ್ಲಿ ನಿಮ್ಮ ಮಕ್ಕಳಿಗೆ, ‘ನಾವು ಈಜಿಪ್ಟಿನಿಂದ ಹೊರಗೆ ಬಂದಾಗ ಯೆಹೋವ ದೇವರು ನಮಗೆ ಮಾಡಿದ್ದನ್ನು ಸ್ಮರಿಸುವುದಕ್ಕಾಗಿ ಇದನ್ನು ಆಚರಿಸುತ್ತೇವೆ,’ ಎಂದು ತಿಳಿಸಬೇಕು.</verse>
				<verse number="9">ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಈಜಿಪ್ಟಿನಿಂದ ಹೊರಗೆ ಬರಮಾಡಿದ್ದಾರೆ. ಆದ್ದರಿಂದ ದೇವರ ನಿಯಮವು ನಿಮ್ಮ ಬಾಯಲ್ಲಿ ಇರುವಂತೆ, ಈ ಆಚರಣೆಯು ನಿಮ್ಮ ಕೈಯಲ್ಲಿ ಗುರುತಾಗಿಯೂ ನಿಮ್ಮ ಹಣೆಯಲ್ಲಿ ಜ್ಞಾಪಕಾರ್ಥವಾಗಿಯೂ ಇರಬೇಕು.</verse>
				<verse number="10">ಹೀಗಿರುವುದರಿಂದ ನೀವು ಪ್ರತಿ ವರುಷವು ನೇಮಿತವಾದ ಕಾಲದಲ್ಲಿ ಈ ಶಾಸನವನ್ನು ಕೈಗೊಳ್ಳಬೇಕು.</verse>
				<verse number="11">“ಯೆಹೋವ ದೇವರು ನಿಮಗೂ ನಿಮ್ಮ ಪಿತೃಗಳಿಗೂ ಪ್ರಮಾಣ ಮಾಡಿದ ಪ್ರಕಾರ, ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ, ಅದನ್ನು ನಿಮಗೆ ಕೊಟ್ಟನಂತರ,</verse>
				<verse number="12">ನಿಮ್ಮಲ್ಲಿಯೂ ನಿಮ್ಮ ಪಶುಪ್ರಾಣಿಗಳಲ್ಲಿಯೂ ಹುಟ್ಟುವ ಪ್ರತಿಯೊಂದು ಗರ್ಭದ ಪ್ರಥಮ ಫಲವನ್ನು ನೀವು ಯೆಹೋವ ದೇವರಿಗೆ ಕೊಡಬೇಕು.</verse>
				<verse number="13">ಕತ್ತೆಯ ಚೊಚ್ಚಲು ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ವಿಮೋಚಿಸಿಕೊಳ್ಳಬೇಕು. ಹಾಗೆ ವಿಮೋಚಿಸಿಕೊಳ್ಳದೆ ಹೋದರೆ ಅದರ ಕುತ್ತಿಗೆ ಮುರಿಯಬೇಕು. ಮನುಷ್ಯರಲ್ಲಿ ಚೊಚ್ಚಲ ಗಂಡು ಮಕ್ಕಳನ್ನು ಬದಲುಕೊಟ್ಟು, ವಿಮೋಚಿಸಲೇಬೇಕು.</verse>
				<verse number="14">“ಮುಂದೆ ಬರುವ ಕಾಲದಲ್ಲಿ ನಿಮ್ಮ ಪುತ್ರರು ನಿಮಗೆ, ‘ಇದರ ಅರ್ಥವೇನು?’ ಎಂದು ಕೇಳುವಾಗ, ನೀವು ಅವರಿಗೆ, ‘ಯೆಹೋವ ದೇವರು ತಮ್ಮ ಭುಜಬಲದಿಂದ ನಮ್ಮನ್ನು ಈಜಿಪ್ಟಿನ ದಾಸತ್ವದೊಳಗಿಂದ ಹೊರಗೆ ಬರಮಾಡಿದ್ದಾರೆ.</verse>
				<verse number="15">ಫರೋಹನು ಹಟಮಾರಿತನದಿಂದ ನಮ್ಮನ್ನು ಕಳುಹಿಸದೆ ಇದ್ದಾಗ, ಯೆಹೋವ ದೇವರು ಈಜಿಪ್ಟ್ ದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಎಂದರೆ, ಮನುಷ್ಯರ ಹಾಗೂ ಪಶುಪ್ರಾಣಿಗಳ ಚೊಚ್ಚಲಾದವುಗಳನ್ನು ಕೊಂದುಹಾಕಿದರು. ಆದ್ದರಿಂದ ಚೊಚ್ಚಲ ಗಂಡುಗಳನ್ನೆಲ್ಲಾ ಯೆಹೋವ ದೇವರಿಗೆ ಅರ್ಪಿಸುತ್ತೇವೆ. ನಮ್ಮ ಪುತ್ರರಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇವೆ,’</verse>
				<verse number="16">ಇದು ನಿಮ್ಮ ಕೈಯಲ್ಲಿ ಗುರುತಾಗಿಯೂ ನಿಮ್ಮ ಹಣೆಯ ಮೇಲೆ ಸಂಕೇತವಾಗಿಯೂ ಇರಲಿ. ಏಕೆಂದರೆ ಯೆಹೋವ ದೇವರು ತಮ್ಮ ಭುಜಬಲದಿಂದ ನಮ್ಮನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ್ದಾರೆ ಎಂದು ಹೇಳಬೇಕು,” ಎಂದರು.</verse>
				<verse number="17">ಫರೋಹನು ಜನರನ್ನು ಕಳುಹಿಸಿಬಿಟ್ಟಾಗ, ಫಿಲಿಷ್ಟಿಯರ ದೇಶದ ದಾರಿಯು ಸಮೀಪವಿದ್ದರೂ ದೇವರು ಅವರನ್ನು ಅದರಲ್ಲಿ ನಡೆಸಲಿಲ್ಲ. ಏಕೆಂದರೆ ದೇವರು, “ಜನರು ಯುದ್ಧವನ್ನು ನೋಡಿ, ಮನಸ್ಸನ್ನು ಬೇರೆಮಾಡಿಕೊಂಡು, ಈಜಿಪ್ಟಿಗೆ ಹಿಂದಿರುಗಿಯಾರು,” ಎಂದು ಹೇಳಿದರು.</verse>
				<verse number="18">ಹೀಗಿರುವುದರಿಂದ ಯೆಹೋವ ದೇವರು ಜನರನ್ನು ಕೆಂಪುಸಮುದ್ರದ ಮರುಭೂಮಿಯಲ್ಲಿ ಸುತ್ತಿಕೊಂಡು ಹೋಗುವಂತೆ ಮಾಡಿದರು. ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಈಜಿಪ್ಟ್ ದೇಶದೊಳಗಿಂದ ಹೋದರು.</verse>
				<verse number="19">ಆಗ ಮೋಶೆಯು ತನ್ನೊಂದಿಗೆ ಯೋಸೇಫನ ಎಲುಬುಗಳನ್ನು ತೆಗೆದುಕೊಂಡು ಹೋದನು. ಏಕೆಂದರೆ ಯೋಸೇಫನು ಇಸ್ರಾಯೇಲರಿಗೆ, “ದೇವರು ನಿಜವಾಗಿಯೂ ನಿಮ್ಮ ಸಹಾಯಕ್ಕೆ ಬರುವರು. ಆಗ ನೀವು ನನ್ನ ಎಲುಬುಗಳನ್ನು ಇಲ್ಲಿಂದ ನಿಮ್ಮ ಕೂಡ ತೆಗೆದುಕೊಂಡು ಹೋಗಬೇಕು,” ಎಂದು ಹೇಳಿ ಅವರಿಂದ ದೃಢಪ್ರಮಾಣ ಮಾಡಿಸಿದ್ದನು.</verse>
				<verse number="20">ಹೀಗೆ ಅವರು ಸುಕ್ಕೋತಿನಿಂದ ಪ್ರಯಾಣಮಾಡಿ, ಏತಾಮಿನ ಮರುಭೂಮಿಯ ಅಂಚಿನಲ್ಲಿ ಇಳಿದುಕೊಂಡರು.</verse>
				<verse number="21">ಇದಲ್ಲದೆ ಅವರು ಹಗಲೂ ರಾತ್ರಿಯೂ ಪ್ರಯಾಣ ಮಾಡುವ ಹಾಗೆ ಯೆಹೋವ ದೇವರು ಹಗಲಲ್ಲಿ ಅವರಿಗೆ ದಾರಿ ತೋರಿಸುವುದಕ್ಕೆ ಮೇಘದ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅವರಿಗೆ ಬೆಳಕು ಕೊಡುವುದಕ್ಕೆ ಅಗ್ನಿಯ ಸ್ತಂಭದಲ್ಲಿಯೂ ಅವರ ಮುಂದೆ ಹೋದರು.</verse>
				<verse number="22">ದೇವರು ಹಗಲಲ್ಲಿ ಮೇಘಸ್ತಂಭವನ್ನೂ ರಾತ್ರಿಯಲ್ಲಿ ಅಗ್ನಿಸ್ತಂಭವನ್ನೂ ಜನರ ಎದುರಿನಿಂದ ತೆಗೆದುಬಿಡಲಿಲ್ಲ.</verse>
			</chapter>
			<chapter number="14">
				<verse number="1">ತರುವಾಯ ಯೆಹೋವ ದೇವರು ಮಾತನಾಡಿ ಮೋಶೆಗೆ,</verse>
				<verse number="2">“ಇಸ್ರಾಯೇಲರು ಹಿಂತಿರುಗಿ ಹೋಗಿ ಪೀಹಹೀರೋತಿಗೆ ಎದುರಾಗಿ ಮಿಗ್ದೋಲಿಗೂ ಸಮುದ್ರಕ್ಕೂ ಮಧ್ಯದಲ್ಲಿ ಬಾಲ್ಜೆಫೋನಿಗೆ ಎದುರಾಗಿ ಇಳಿದುಕೊಳ್ಳಬೇಕೆಂದು ಅವರಿಗೆ ಹೇಳು. ಅದರ ಎದುರಾಗಿ ನೀವು ಸಮುದ್ರದ ತೀರದಲ್ಲಿ ಇಳಿದುಕೊಳ್ಳಬೇಕು.</verse>
				<verse number="3">ಏಕೆಂದರೆ ಫರೋಹನು ಇಸ್ರಾಯೇಲರ ವಿಷಯದಲ್ಲಿ, ‘ಅವರು ಗಲಿಬಿಲಿಗೊಂಡು ಮರುಭೂಮಿಯನ್ನು ಸುತ್ತುವರಿದ ಪ್ರದೇಶದಲ್ಲಿ ಅತ್ತಿತ್ತ ಹೋಗುತ್ತಿರುವರು,’ ಎಂದುಕೊಳ್ಳುವನು.</verse>
				<verse number="4">ಇದಲ್ಲದೆ ಫರೋಹನು ನಿಮ್ಮನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು. ಫರೋಹನಲ್ಲಿಯೂ, ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು. ಆಗ ನಾನೇ ಯೆಹೋವ ದೇವರೆಂದು ಈಜಿಪ್ಟಿನವರು ತಿಳಿಯುವರು,” ಎಂದು ಹೇಳಿದರು. ಅದರಂತೆಯೇ ಇಸ್ರಾಯೇಲರು ಮಾಡಿದರು.</verse>
				<verse number="5">ಜನರು ಓಡಿಹೋದರೆಂಬ ವಿಷಯ ಈಜಿಪ್ಟಿನ ಅರಸನಿಗೆ ತಿಳಿಯಿತು. ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಅವರಿಗೆ ವಿರೋಧವಾಗಿ ತಿರುಗಿಕೊಂಡಿತು. ಅವರು, “ಇಸ್ರಾಯೇಲರು ನಮ್ಮ ಸೇವೆ ಮಾಡುವುದನ್ನು ಬಿಟ್ಟು ಹೋಗಿಬಿಡುವಂತೆ ನಾವು ಏಕೆ ಮಾಡಿದೆವು?” ಎಂದುಕೊಂಡರು.</verse>
				<verse number="6">ಆಗ ಫರೋಹನು ತನ್ನ ರಥವನ್ನು ಸಿದ್ಧಮಾಡಿ, ತನ್ನ ಸೈನ್ಯವನ್ನು ತನ್ನೊಂದಿಗೆ ತೆಗೆದುಕೊಂಡನು.</verse>
				<verse number="7">ಇದಲ್ಲದೆ ಅವನು ಆರಿಸಿಕೊಂಡ ಅತ್ಯುತ್ತಮ ಆರುನೂರು ರಥಗಳನ್ನೂ, ಈಜಿಪ್ಟಿನ ಎಲ್ಲಾ ರಥಗಳನ್ನೂ, ಅವುಗಳ ಮೇಲೆ ಅಧಿಪತಿಗಳನ್ನೂ ತೆಗೆದುಕೊಂಡನು.</verse>
				<verse number="8">ಈಜಿಪ್ಟಿನ ಅರಸನಾದ ಫರೋಹನ ಹೃದಯವನ್ನು ಯೆಹೋವ ದೇವರು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲರನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲರು ಧೈರ್ಯದಿಂದ ಹೊರಗೆ ಹೋದರು.</verse>
				<verse number="9">ಈಜಿಪ್ಟಿನವರು ಅವರನ್ನು ಹಿಂದಟ್ಟಿದರು. ಅವರು ಸಮುದ್ರ ತೀರದಲ್ಲಿ ಇಳಿದುಕೊಂಡಿರುವಾಗ, ಫರೋಹನ ಎಲ್ಲಾ ಕುದುರೆಗಳೂ ರಥಗಳೂ ಕುದುರೆ ಸವಾರರೂ ಅವನ ಸೈನ್ಯವೂ ಪೀಹಹೀರೋತಿನ ಸಮೀಪದಲ್ಲಿ ಬಾಲ್ಜೆಫೋನಿನ ಎದುರಾಗಿ ಇಸ್ರಾಯೇಲರನ್ನು ಸಮೀಪಿಸಿದರು.</verse>
				<verse number="10">ಫರೋಹನು ಸಮೀಪಕ್ಕೆ ಬರುವುದನ್ನು ಇಸ್ರಾಯೇಲರು ಕಣ್ಣೆತ್ತಿ ನೋಡಿದರು. ಈಜಿಪ್ಟಿನವರು ಅವರ ಹಿಂದೆ ಬರುತ್ತಿರುವುದನ್ನು ಕಂಡು ಇಸ್ರಾಯೇಲರು ಬಹಳ ಭಯಪಟ್ಟು ಯೆಹೋವ ದೇವರಿಗೆ ಮೊರೆಯಿಟ್ಟರು.</verse>
				<verse number="11">ಅವರು ಮೋಶೆಗೆ, “ಈಜಿಪ್ಟಿನಲ್ಲಿ ಸಮಾಧಿಗಳು ಇಲ್ಲದ ಕಾರಣ ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಕರೆದುಕೊಂಡು ಬಂದೆಯೋ? ಏಕೆ ನೀನು ಈ ಪ್ರಕಾರ ನಮಗೆ ಮಾಡಿ, ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದೆ?</verse>
				<verse number="12">ನಾವು ಈಜಿಪ್ಟ್ ದೇಶದಲ್ಲಿದ್ದಾಗಲೇ, ‘ನೀನು ನಮ್ಮ ಗೊಡವೆಗೆ ಬರಬೇಡ, ನಾವು ಈಜಿಪ್ಟಿನವರಿಗೆ ಸೇವೆಮಾಡುತ್ತೇವೆ,’ ಎಂದು ನಿನಗೆ ಹೇಳಲಿಲ್ಲವೇ? ನಾವು ಮರುಭೂಮಿಯಲ್ಲಿ ಸಾಯುವುದಕ್ಕಿಂತ ಈಜಿಪ್ಟಿನವರಿಗೆ ಸೇವೆ ಮಾಡುವುದೇ ಒಳ್ಳೆಯದಾಗಿತ್ತಲ್ಲಾ?” ಎಂದು ಹೇಳಿದರು.</verse>
				<verse number="13">ಅದಕ್ಕೆ ಮೋಶೆಯು ಜನರಿಗೆ, “ನೀವು ಭಯಪಡಬೇಡಿರಿ, ದೃಢವಾಗಿ ನಿಲ್ಲಿರಿ. ಯೆಹೋವ ದೇವರು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಈಜಿಪ್ಟಿನವರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವುದಿಲ್ಲ.</verse>
				<verse number="14">ಯೆಹೋವ ದೇವರು ನಿಮಗೋಸ್ಕರ ಯುದ್ಧಮಾಡುವರು, ಆದರೆ ನೀವು ವಿಶ್ರಾಂತಿಯಿಂದಿರಿ,” ಎಂದನು.</verse>
				<verse number="15">ಆಗ ಯೆಹೋವ ದೇವರು ಮೋಶೆಗೆ, “ನೀನು ನನಗೆ ಮೊರೆಯಿಡುವುದೇನು? ಇಸ್ರಾಯೇಲರಿಗೆ ಮುಂದಕ್ಕೆ ಹೊರಡಬೇಕೆಂದು ಹೇಳು.</verse>
				<verse number="16">ನೀನು ನಿನ್ನ ಕೋಲನ್ನು ಎತ್ತಿ, ನಿನ್ನ ಕೈಯನ್ನು ಸಮುದ್ರದ ಮೇಲೆ ಚಾಚಿ, ಅದನ್ನು ವಿಭಾಗಿಸು. ಆಗ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು.</verse>
				<verse number="17">ನಾನು ಈಜಿಪ್ಟಿನವರ ಹೃದಯವನ್ನು ಕಠಿಣ ಮಾಡುತ್ತೇನೆ. ಅವರು ಇವರನ್ನು ಹಿಂದಟ್ಟುವರು. ಇದಲ್ಲದೆ ಫರೋಹನ ಮೇಲೆಯೂ ಅವನ ಎಲ್ಲಾ ಸೈನ್ಯದ ಮೇಲೆಯೂ ಅವನ ರಥಗಳ ಮೇಲೆಯೂ ಕುದುರೆಯ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಳ್ಳುವೆನು.</verse>
				<verse number="18">ನಾನು ಫರೋಹನ ಮೇಲೆಯೂ ಅವನ ರಥಗಳ ಮೇಲೆಯೂ ಅವನ ಕುದುರೆ ಸವಾರರ ಮೇಲೆಯೂ ನನ್ನನ್ನು ಘನಪಡಿಸಿಕೊಂಡಾಗ, ನಾನೇ ಯೆಹೋವ ದೇವರೆಂದು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು.</verse>
				<verse number="19">ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.</verse>
				<verse number="20">ಅದು ಈಜಿಪ್ಟಿನ ದಂಡಿಗೂ ಇಸ್ರಾಯೇಲರ ದಂಡಿಗೂ ನಡುವೆ ಬಂದಿತು. ಮೇಘಸ್ತಂಭವು ಈಜಿಪ್ಟಿನವರಿಗೆ ಕತ್ತಲನ್ನೂ ಇಸ್ರಾಯೇಲರಿಗೆ ಬೆಳಕನ್ನೂ ನೀಡಿತು. ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರ ಒಬ್ಬರು ಬರಲಾಗಲಿಲ್ಲ.</verse>
				<verse number="21">ಆಗ ಮೋಶೆಯು ಸಮುದ್ರದ ಮೇಲೆ ತನ್ನ ಬಲಗೈಯನ್ನು ಚಾಚಲಾಗಿ, ಯೆಹೋವ ದೇವರು ರಾತ್ರಿಯೆಲ್ಲಾ ಬಲವಾದ ಪೂರ್ವದಿಕ್ಕಿನ ಗಾಳಿಯಿಂದ ಸಮುದ್ರವನ್ನು ಹಿಂದಕ್ಕೆ ಹೋಗುವಂತೆ ಸಮುದ್ರವನ್ನು ಸರಿಸಿ, ಒಣ ನೆಲ ಕಾಣಿಸುವಂತೆ ಮಾಡಿದರು. ಆಗ ನೀರು ವಿಭಾಗವಾಯಿತು.</verse>
				<verse number="22">ಹೀಗೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಹೋದರು. ನೀರು ಅವರಿಗೆ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಾಗಿ ನಿಂತಿತ್ತು.</verse>
				<verse number="23">ಈಜಿಪ್ಟಿನವರೂ ಫರೋಹನ ಎಲ್ಲಾ ಕುದುರೆಗಳೂ ಅವನ ರಥಗಳೂ ಕುದುರೆ ಸವಾರರೂ ಅವರನ್ನು ಹಿಂದಟ್ಟಿ, ಅವರ ಹಿಂದೆ ಸಮುದ್ರದ ಮಧ್ಯದಲ್ಲಿ ಸೇರಿದರು.</verse>
				<verse number="24">ಬೆಳಗಿನ ಜಾವದಲ್ಲಿ ಯೆಹೋವ ದೇವರು ಅಗ್ನಿ ಮೇಘಗಳ ಸ್ತಂಭದೊಳಗಿಂದ ಈಜಿಪ್ಟಿನ ದಂಡಿನ ಮೇಲೆ ದೃಷ್ಟಿಯಿಟ್ಟು, ಈಜಿಪ್ಟಿನ ದಂಡನ್ನು ಗಾಬರಿಗೊಳಿಸಿದರು.</verse>
				<verse number="25">ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟು ಕಷ್ಟದಿಂದ ಅವರು ಹೋಗುವಂತೆ ಮಾಡಿದರು. ಆಗ ಈಜಿಪ್ಟಿನವರು, “ಇಸ್ರಾಯೇಲರ ಎದುರಿನಿಂದ ಓಡಿಹೋಗೋಣ. ಏಕೆಂದರೆ ಯೆಹೋವ ದೇವರು ಈಜಿಪ್ಟಿನವರಿಗೆ ವಿರೋಧವಾಗಿ ಯುದ್ಧಮಾಡುತ್ತಾರೆ,” ಎಂದು ಹೇಳಿಕೊಂಡರು.</verse>
				<verse number="26">ಆಗ ಯೆಹೋವ ದೇವರು ಮೋಶೆಗೆ, “ಈಜಿಪ್ಟಿನವರನ್ನೂ ಅವರ ರಥಗಳ ಕುದುರೆಯ ಸವಾರರನ್ನೂ ಸಮುದ್ರವು ಮುಳುಗಿಸುವಂತೆ ಸಮುದ್ರದ ಮೇಲೆ ಕೈಚಾಚು,” ಎಂದರು.</verse>
				<verse number="27">ಆಗ ಮೋಶೆಯು ಸಮುದ್ರದ ಮೇಲೆ ಕೈಚಾಚಲಾಗಿ ಸಮುದ್ರವು ಬೆಳಗಾಗುವಾಗಲೇ ಮೊದಲಿನಂತೆ ತುಂಬಿಕೊಂಡಿತು. ಈಜಿಪ್ಟಿನವರು ಓಡಿಹೋಗುತ್ತಾ ಅದಕ್ಕೆ ಎದುರಾಗಿಯೇ ಬಂದರು. ಹೀಗೆ ಯೆಹೋವ ದೇವರು ಈಜಿಪ್ಟಿನವರನ್ನು ಸಮುದ್ರದೊಳಗೆ ಕೆಡವಿಬಿಟ್ಟರು.</verse>
				<verse number="28">ನೀರು ತಿರುಗಿಬಂದು ರಥಗಳೂ ಕುದುರೆಗಳೂ ಸವಾರರೂ ಅವರ ಹಿಂದೆ ಸಮುದ್ರದಲ್ಲಿ ಬರುತ್ತಿದ್ದ ಫರೋಹನ ಎಲ್ಲಾ ಸೈನ್ಯವೂ ಹೀಗೆ ಒಬ್ಬರೂ ಉಳಿಯದಂತೆ ಮುಳುಗಿಸಿತು.</verse>
				<verse number="29">ಆದರೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿದ್ದ ಒಣಗಿದ ನೆಲದ ಮೇಲೆ ನಡೆದುಹೋದರು. ನೀರು ಅವರಿಗೆ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತಿತ್ತು.</verse>
				<verse number="30">ಆ ದಿನದಲ್ಲಿ ಯೆಹೋವ ದೇವರು ಈ ಪ್ರಕಾರ ಇಸ್ರಾಯೇಲರನ್ನು ಈಜಿಪ್ಟಿನವರ ಕೈಯಿಂದ ರಕ್ಷಿಸಿದರು. ಇಸ್ರಾಯೇಲರು ಸಮುದ್ರ ತೀರದಲ್ಲಿ ಸತ್ತ ಈಜಿಪ್ಟಿನವರನ್ನು ನೋಡಿದರು.</verse>
				<verse number="31">ಈಜಿಪ್ಟಿನವರ ಮೇಲೆ ಯೆಹೋವ ದೇವರು ಮಾಡಿದ ದೊಡ್ಡ ಕಾರ್ಯವನ್ನು ನೋಡಿದಾಗ, ಇಸ್ರಾಯೇಲರು ಯೆಹೋವ ದೇವರಿಗೆ ಭಯಪಟ್ಟು, ಅವರಲ್ಲಿಯೂ ಅವರ ಸೇವಕನಾದ ಮೋಶೆಯಲ್ಲಿಯೂ ನಂಬಿಕೆಯಿಟ್ಟರು.</verse>
			</chapter>
			<chapter number="15">
				<verse number="1">ಆಗ ಮೋಶೆ ಮತ್ತು ಇಸ್ರಾಯೇಲರು ಯೆಹೋವ ದೇವರಿಗೆ ಈ ಹಾಡನ್ನು ಹಾಡಿದರು: “ನಾನು ಯೆಹೋವ ದೇವರಿಗೆ ಹಾಡುತ್ತೇನೆ. ಏಕೆಂದರೆ ಅವರು ಪ್ರಭಾವದಿಂದ ಜಯಶಾಲಿಯಾದರು. ಕುದುರೆಗಳನ್ನೂ ರಾಹುತರನ್ನೂ ಸಮುದ್ರದಲ್ಲಿ ದಬ್ಬಿದ್ದಾರೆ.</verse>
				<verse number="2">“ಯೆಹೋವ ದೇವರು ನನ್ನ ಬಲವೂ ಕೀರ್ತನೆಯೂ ಆಗಿದ್ದಾರೆ; ಅವರು ನನ್ನ ರಕ್ಷಣೆಯಾದರು; ಅವರು ನನ್ನ ದೇವರು, ಅವರನ್ನು ಕೊಂಡಾಡುವೆನು; ಅವರು ನನ್ನ ತಂದೆಯ ದೇವರು, ನಾನು ಅವರನ್ನು ಘನಪಡಿಸುವೆನು.</verse>
				<verse number="3">ಯೆಹೋವ ದೇವರು ಯುದ್ಧವೀರರು; ಯೆಹೋವ ದೇವರು ಎಂಬುದೇ ಅವರ ಹೆಸರು.</verse>
				<verse number="4">ಅವರು ಫರೋಹನ ರಥಗಳನ್ನೂ, ಅವನ ಸ್ಯೆನ್ಯವನ್ನೂ ಸಮುದ್ರದಲ್ಲಿ ಅಲ್ಲಾಡಿಸಿ ಎಸೆದಿದ್ದಾರೆ. ಫರೋಹನ ಅತ್ಯುತ್ತಮ ಅಧಿಕಾರಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿ ಹೋದರು.</verse>
				<verse number="5">ಆಳವಾದ ಜಲರಾಶಿ ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ ಸಮುದ್ರದ ತಳಕ್ಕೆ ಮುಳುಗಿದರು.</verse>
				<verse number="6">ಯೆಹೋವ ದೇವರೇ, ನಿಮ್ಮ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳದ್ದಾಗಿದೆ; ಯೆಹೋವ ದೇವರೇ, ನಿಮ್ಮ ಬಲಗೈ ಶತ್ರುವನ್ನು ಜಜ್ಜಿ ಪುಡಿ ಮಾಡಿತು.</verse>
				<verse number="7">“ನಿಮ್ಮ ಮಹತ್ತಾದ ಘನತೆಯಲ್ಲಿ ನಿಮಗೆ ವಿರೋಧವಾಗಿ ಎದ್ದವರನ್ನು ಕೆಡವಿಬಿಟ್ಟಿರುವಿರಿ. ನಿಮ್ಮ ಕೋಪವು ಬೆಂಕಿಯಂತೆ ಕಾರಿದೆ; ಅದು ಅವರನ್ನು ಕೋಲಿನಂತೆ ದಹಿಸಿತು.</verse>
				<verse number="8">ನೀವು ಬೀಸಿದ ಬಿರುಸಾದ ಗಾಳಿಯಿಂದ ನೀರು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು. ಜಲರಾಶಿಗಳು ಸಮುದ್ರದ ಮಧ್ಯದಲ್ಲಿ ಗಟ್ಟಿಯಾದವು.</verse>
				<verse number="9">ಶತ್ರುವು ಹೆಮ್ಮೆಯಿಂದ ಹೀಗೆ ಮಾತನಾಡಿಕೊಳ್ಳುತ್ತಿದ್ದರು, ‘ನಾನು ಹಿಂದಟ್ಟುವೆನು, ಅವರನ್ನು ಹಿಡಿಯುವೆನು, ನಾನು ಅವರ ಕೊಳ್ಳೆಯನ್ನು ಹಂಚುವೆನು; ನನ್ನ ಆಶೆಗಳು ಅವರಿಂದ ತೃಪ್ತಿ ಹೊಂದುವುವು; ನಾನು ನನ್ನ ಖಡ್ಗವನ್ನು ಹಿರಿಯುವೆನು; ನನ್ನ ಕೈ ಅವರನ್ನು ಸಂಹಾರ ಮಾಡುವುದು.’</verse>
				<verse number="10">ನೀವು ನಿಮ್ಮ ಶ್ವಾಸ ಊದಿದಾಗ ಸಮುದ್ರವು ಅವರನ್ನು ನುಂಗಿಕೊಂಡಿತು. ಅವರು ಸೀಸದಂತೆ ಮಹಾಸಾಗರದಲ್ಲಿ ಮುಳುಗಿ ಹೋದರು.</verse>
				<verse number="11">ಯೆಹೋವ ದೇವರೇ, ನಿಮ್ಮ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ವೈಭವ ಹೊಂದಿದವರೂ, ಮಹಿಮೆಯಲ್ಲಿ ಅತಿಶಯರೂ, ಅದ್ಭುತಗಳನ್ನು ಮಾಡುವವರೂ ಆದ ನಿಮ್ಮ ಹಾಗೆ ಯಾರಿದ್ದಾರೆ?</verse>
				<verse number="12">“ನೀವು ನಿಮ್ಮ ಬಲಗೈಯನ್ನು ಚಾಚಲು ಭೂಮಿಯು ಅವರನ್ನು ನುಂಗಿತು.</verse>
				<verse number="13">ನೀವು ವಿಮೋಚಿಸಿದ ಜನರನ್ನು ನೀವು ನಿಮ್ಮ ಪ್ರೀತಿಯಿಂದ ನಡೆಸಿದ್ದೀರಿ. ನೀವು ಅವರನ್ನು ನಿಮ್ಮ ಬಲದಿಂದ ನಿಮ್ಮ ಪರಿಶುದ್ಧ ನಿವಾಸಕ್ಕೆ ನಡೆಸಿದ್ದೀರಿ.</verse>
				<verse number="14">ಜನರು ಇದನ್ನು ಕೇಳಿದಾಗ ಭಯಪಡುವರು. ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವುದು.</verse>
				<verse number="15">ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಕಂಪನವು ಮೋವಾಬಿನ ಬಲಿಷ್ಠರನ್ನು ಹಿಡಿಯುವುದು; ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.</verse>
				<verse number="16">ಭಯವೂ ಹೆದರಿಕೆಯೂ ಅವರಿಗಾಗುವುದು; ನಿಮ್ಮ ಜನರು ದಾಟಿ ಹೋಗುವವರೆಗೆ ಯೆಹೋವ ದೇವರೇ, ನೀವು ಕೊಂಡುಕೊಂಡ ಜನರು ದಾಟಿಹೋಗುವವರೆಗೆ ನಿಮ್ಮ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗಿರುವರು.</verse>
				<verse number="17">ಅವರನ್ನು ಒಳಗೆ ಬರಮಾಡಿ, ಯೆಹೋವ ದೇವರೇ, ನಿಮ್ಮ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ ಯೆಹೋವ ದೇವರೇ, ನೀವು ವಾಸಿಸುವುದಕ್ಕೆ ಮಾಡಿಕೊಂಡಿರುವ ನಿಮ್ಮ ಸ್ವತ್ತಾಗಿರುವ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿರಿ.</verse>
				<verse number="18">“ಯೆಹೋವ ದೇವರು ಯುಗಯುಗಾಂತರಗಳವರೆಗೆ ಆಳುವರು.”</verse>
				<verse number="19">ಫರೋಹನ ಕುದುರೆಗಳು ಅವನ ರಥಗಳ ಮತ್ತು ಸವಾರರ ಸಂಗಡ ಸಮುದ್ರದೊಳಗೆ ಬಂದಾಗ, ಯೆಹೋವ ದೇವರು ಸಮುದ್ರದ ನೀರನ್ನು ಅವರ ಮೇಲೆ ತಿರುಗಿ ಬರಮಾಡಿದರು. ಆದರೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿನ ಒಣನೆಲದ ಮೇಲೆ ದಾಟಿಹೋದರು.</verse>
				<verse number="20">ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋದರಿ ಮಿರ್ಯಾಮಳು ಕೈಯಲ್ಲಿ ತಾಳವನ್ನು ತೆಗೆದುಕೊಂಡಳು. ಸ್ತ್ರೀಯರೆಲ್ಲರೂ ತಾಳಗಳನ್ನು ಹಿಡಿದುಕೊಂಡು ನಾಟ್ಯವಾಡುತ್ತಾ, ಆಕೆಯನ್ನು ಹಿಂಬಾಲಿಸಿ ಹೊರಹೊರಟರು.</verse>
				<verse number="21">ಮಿರ್ಯಾಮಳು ಅವರಿಗೆ ಹೀಗೆ ಹಾಡಿದಳು: “ಯೆಹೋವ ದೇವರಿಗೆ ನೀವು ಹಾಡಿರಿ, ಅವರು ಮಹೋನ್ನತದಲ್ಲಿದ್ದಾರೆ; ಕುದುರೆಯನ್ನೂ ಸವಾರರನ್ನೂ ಸಮುದ್ರದಲ್ಲಿ ಮುಣುಗಿಸಿಬಿಟ್ಟರು.”</verse>
				<verse number="22">ಆಮೇಲೆ ಮೋಶೆಯು ಇಸ್ರಾಯೇಲರನ್ನು ಕೆಂಪು ಸಮುದ್ರದಿಂದ ನಡೆಸಿದನು. ಅವರು ಶೂರಿನ ಮರುಭೂಮಿಯೊಳಗೆ ಹೋದರು. ಅವರು ಮರುಭೂಮಿಯಲ್ಲಿ ಮೂರು ದಿನಗಳು ಪ್ರಯಾಣಮಾಡಿದರೂ ನೀರನ್ನು ಕಂಡುಕೊಳ್ಳಲಿಲ್ಲ.</verse>
				<verse number="23">ಅವರು ಮಾರಾ ಎಂಬಲ್ಲಿಗೆ ಬಂದ ಮೇಲೆ ಅಲ್ಲಿಯ ನೀರನ್ನು ಕುಡಿಯಲಾರದೆ ಇದ್ದರು; ಅದು ಕಹಿಯಾಗಿತ್ತು. ಆದಕಾರಣ ಅದರ ಹೆಸರು “ಮಾರಾ” ಎಂದು ಕರೆಯಲಾಯಿತು.</verse>
				<verse number="24">ಆದ್ದರಿಂದ ಜನರು, “ನಾವು ಏನು ಕುಡಿಯೋಣ?” ಎಂದು ಹೇಳಿ, ಮೋಶೆಗೆ ವಿರೋಧವಾಗಿ ಗೊಣಗುಟ್ಟಿದರು.</verse>
				<verse number="25">ಅವನು ಯೆಹೋವ ದೇವರಿಗೆ ಮೊರೆಯಿಟ್ಟನು. ಯೆಹೋವ ದೇವರು ಅವನಿಗೆ ಒಂದು ಗಿಡವನ್ನು ತೋರಿಸಿದರು. ಅವನು ಅದನ್ನು ನೀರಿನಲ್ಲಿ ಹಾಕಿದಾಗ, ನೀರು ಸಿಹಿಯಾಗಿ ಬಿಟ್ಟಿತು. ಅಲ್ಲಿ ದೇವರು ಅವರಿಗಾಗಿ ಒಂದು ನಿಯಮವನ್ನೂ ಒಂದು ಶಾಸನವನ್ನೂ ಮಾಡಿದರು. ಅಲ್ಲಿಯೇ ದೇವರು ಅವರನ್ನು ಪರೀಕ್ಷಿಸಿದರು.</verse>
				<verse number="26">ದೇವರು, “ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಶ್ರದ್ಧೆಯಿಂದ ಕಿವಿಗೊಟ್ಟು, ಅವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ, ಅವರ ಆಜ್ಞೆಗಳಿಗೆ ಕಿವಿಗೊಟ್ಟು, ಅವರ ನಿಯಮಗಳನ್ನು ಕೈಗೊಂಡರೆ, ಈಜಿಪ್ಟಿನ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿಮ್ಮ ಮೇಲೆ ಬರಮಾಡುವುದಿಲ್ಲ. ನಿಮ್ಮನ್ನು ಸ್ವಸ್ಥಪಡಿಸುವ ಯೆಹೋವ ದೇವರು ನಾನೇ ಆಗಿದ್ದೇನೆ,” ಎಂದು ಪ್ರಕಟಪಡಿಸಿದರು.</verse>
				<verse number="27">ತರುವಾಯ ಇಸ್ರಾಯೇಲರು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ಅವರು ಆ ನೀರಿನ ಬಳಿಯಲ್ಲಿ ಇಳಿದುಕೊಂಡರು.</verse>
			</chapter>
			<chapter number="16">
				<verse number="1">ಇಸ್ರಾಯೇಲರ ಸಭೆಯೆಲ್ಲಾ ಏಲೀಮಿನಿಂದ ಪ್ರಯಾಣಮಾಡಿ, ಈಜಿಪ್ಟ್ ದೇಶದಿಂದ ಹೊರಟ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಏಲೀಮಿಗೂ, ಸೀನಾಯಿ ಪರ್ವತಕ್ಕೂ ಮಧ್ಯೆ ಇರುವ ಸೀನ್ ಮರುಭೂಮಿಗೆ ಬಂದರು.</verse>
				<verse number="2">ಆಗ ಇಸ್ರಾಯೇಲರ ಸಭೆಯೆಲ್ಲಾ ಮರುಭೂಮಿಯಲ್ಲಿ ಮೋಶೆ ಮತ್ತು ಆರೋನರ ವಿರೋಧವಾಗಿ ಗೊಣಗುಟ್ಟಿದರು.</verse>
				<verse number="3">ಇಸ್ರಾಯೇಲರು ಅವರಿಗೆ, “ನಾವು ಈಜಿಪ್ಟ್ ದೇಶದಲ್ಲಿ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಸಾಕಾಗುವಷ್ಟು ರೊಟ್ಟಿಯನ್ನು ತಿನ್ನುತ್ತಿದ್ದಾಗ, ಯೆಹೋವ ದೇವರ ಕೈಯಿಂದ ಸತ್ತು ಹೋಗಿದ್ದರೆ ಒಳ್ಳೆಯದಾಗಿತ್ತು. ಇಡೀ ಜನಾಂಗವೇ ಹಸಿವೆಯಿಂದ ಸತ್ತು ಹೋಗುವಂತೆ ನಮ್ಮನ್ನು ಈ ಮರುಭೂಮಿಗೆ ಬರಮಾಡಿದ್ದೀರಿ,” ಎಂದರು.</verse>
				<verse number="4">ಆಗ ಯೆಹೋವ ದೇವರು ಮೋಶೆಗೆ, “ನಾನು ರೊಟ್ಟಿಯನ್ನು ನಿಮಗಾಗಿ ಆಕಾಶದಿಂದ ಸುರಿಸುತ್ತೇನೆ. ಜನರು ಹೊರಗೆ ಹೋಗಿ ಪ್ರತಿದಿನ ಆ ದಿನಕ್ಕೆ ಬೇಕಾದದ್ದನ್ನು ಕೂಡಿಸಲಿ. ಇದರಿಂದ ಅವರು ನನ್ನ ಆಜ್ಞೆಗಳನ್ನು ಕೈಗೊಳ್ಳುವರೋ, ಇಲ್ಲವೋ ಎಂಬುದನ್ನು ಪರೀಕ್ಷಿಸುತ್ತೇನೆ.</verse>
				<verse number="5">ಆರನೆಯ ದಿವಸದಲ್ಲಿ ಮಾತ್ರ ಅವರು ತಂದದ್ದನ್ನು ಸಿದ್ಧಪಡಿಸಿಕೊಳ್ಳುವಾಗ, ಪ್ರತಿದಿನ ಕೂಡಿಸುವುದಕ್ಕಿಂತಲೂ ಎರಡರಷ್ಟಾಗಿರುವುದು,” ಎಂದು ಹೇಳಿದರು.</verse>
				<verse number="6">ಆಗ ಮೋಶೆ, ಆರೋನರು ಇಸ್ರಾಯೇಲರಿಗೆಲ್ಲಾ, “ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದವರು ಯೆಹೋವ ದೇವರೇ, ಎಂದು ಸಾಯಂಕಾಲವಾದಾಗ ನಿಮಗೆ ತಿಳಿಯುವುದು.</verse>
				<verse number="7">ಬೆಳಿಗ್ಗೆ ಯೆಹೋವ ದೇವರ ಮಹಿಮೆಯನ್ನು ನೋಡುವಿರಿ. ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ನೀವು ಗೊಣಗುಟ್ಟಿದ್ದನ್ನು ಅವರು ಕೇಳಿದ್ದಾರೆ. ನಮಗೆ ವಿರೋಧವಾಗಿ ನೀವು ಗೊಣಗುಟ್ಟುವ ಹಾಗೆ ನಾವು ಯಾರು?” ಎಂದರು.</verse>
				<verse number="8">ಮೋಶೆ ಮುಂದುವರಿಸಿ, “ಸಂಜೆಯಲ್ಲಿ ಯೆಹೋವ ದೇವರು ನಿಮಗೆ ಮಾಂಸಾಹಾರವನ್ನೂ, ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ಕೊಡುವರು. ನಿಮ್ಮ ಗೊಣಗುಟ್ಟುವಿಕೆಯು ಯೆಹೋವ ದೇವರಿಗೆ ಹೊರತು ನಮಗಲ್ಲ. ನಾವು ಎಷ್ಟು ಮಾತ್ರದವರು,” ಎಂದನು.</verse>
				<verse number="9">ಅನಂತರ ಮೋಶೆ ಆರೋನನಿಗೆ, “ನೀನು ಇಸ್ರಾಯೇಲರ ಸಮೂಹಕ್ಕೆ, ‘ನಿಮ್ಮ ಗೊಣಗುಟ್ಟುವಿಕೆಯನ್ನು ಯೆಹೋವ ದೇವರು ಕೇಳಿದ್ದರಿಂದ ನೀವು ಅವರ ಮುಂದೆ ಬನ್ನಿರಿ,’ ಎಂದು ಹೇಳು,” ಎಂದನು.</verse>
				<verse number="10">ಆರೋನನು ಇಸ್ರಾಯೇಲರ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಮರುಭೂಮಿಯ ಕಡೆಗೆ ನೋಡಿದರು. ಆಗ, ಯೆಹೋವ ದೇವರ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು.</verse>
				<verse number="11">ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,</verse>
				<verse number="12">“ಇಸ್ರಾಯೇಲರ ಗೊಣಗುಟ್ಟುವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತನಾಡಿ, ‘ನೀವು ಸಂಜೆಯಲ್ಲಿ ಮಾಂಸವನ್ನು ತಿನ್ನುವಿರಿ. ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ,’ ಎಂದು ಅವರಿಗೆ ಹೇಳು,” ಎಂದರು.</verse>
				<verse number="13">ಸಂಜೆಯಲ್ಲಿ ಲಾವಕ್ಕಿಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು. ಬೆಳಿಗ್ಗೆ ಮಂಜು ಪಾಳೆಯದ ಸುತ್ತಲೂ ಬಿದ್ದಿತ್ತು.</verse>
				<verse number="14">ಬಿದ್ದಿದ್ದ ಮಂಜು ಹೋದ ಮೇಲೆ, ಗಟ್ಟಿಯಾದ ಪದಾರ್ಥವು ಮಂಜಿನ ಹನಿಯಷ್ಟು ಚಿಕ್ಕದಾದದ್ದೂ, ಗುಂಡಾದದ್ದೂ ಮರುಭೂಮಿಯಲ್ಲಿ ಹರಡಿತ್ತು.</verse>
				<verse number="15">ಇಸ್ರಾಯೇಲರು ಅದನ್ನು ನೋಡಿದಾಗ ಅವರು, ಒಬ್ಬರಿಗೊಬ್ಬರು, “ಇದೇನು?” ಎಂದರು. ಏಕೆಂದರೆ ಅದು ಏನಾಗಿತ್ತೆಂದು ಅವರಿಗೆ ತಿಳಿಯಲಿಲ್ಲ. ಆಗ ಮೋಶೆಯು ಅವರಿಗೆ, “ಯೆಹೋವ ದೇವರು ನಿಮಗೆ ಕೊಟ್ಟಿರುವ ರೊಟ್ಟಿಯು ಇದೇ.</verse>
				<verse number="16">ಯೆಹೋವ ದೇವರು, ‘ಪ್ರತಿಯೊಬ್ಬನು ತಾನು ಎಷ್ಟು ತಿನ್ನುವನೋ ಅದರ ಪ್ರಕಾರ ಅದನ್ನು ಕೂಡಿಸಲಿ. ಪ್ರತಿಯೊಬ್ಬನಿಗೆ ಸುಮಾರು ಒಂದು ಕಿಲೋಗ್ರಾಂದಷ್ಟು ನಿಮ್ಮ ಡೇರೆಗಳಲ್ಲಿರುವ ವ್ಯಕ್ತಿಗಳ ಲೆಕ್ಕದ ಪ್ರಕಾರ ನೀವು ತೆಗೆದುಕೊಳ್ಳಿರಿ,’ ಎಂದು ಹೇಳಿದ್ದಾರೆ,” ಎಂದನು.</verse>
				<verse number="17">ಇಸ್ರಾಯೇಲರು ಅದರಂತೆ ಮಾಡಿ ಕೆಲವರು ಹೆಚ್ಚು, ಕೆಲವರು ಕಡಿಮೆ ಕೂಡಿಸಿದರು.</verse>
				<verse number="18">ಓಮೆರದಿಂದ ಅಳತೆಮಾಡಿದಾಗ, ಅತಿಯಾಗಿ ಕೂಡಿಸಿದವನಿಗೆ ಹೆಚ್ಚಾಗಲಿಲ್ಲ, ಮಿತವಾಗಿ ಕೂಡಿಸಿದವನಿಗೆ ಕೊರತೆಯಾಗಲಿಲ್ಲ. ಒಬ್ಬೊಬ್ಬನು ಊಟಮಾಡುವಷ್ಟು ಅವರು ಕೂಡಿಸಿದರು.</verse>
				<verse number="19">ಮೋಶೆ ಅವರಿಗೆ, “ಇದನ್ನು ಯಾರೂ ಮರುದಿನದವರೆಗೆ ಇಟ್ಟುಕೊಳ್ಳಬಾರದು,” ಎಂದು ಹೇಳಿದನು.</verse>
				<verse number="20">ಆದರೂ ಅವರು ಮೋಶೆಯ ಮಾತನ್ನು ಕೇಳಲಿಲ್ಲ. ಕೆಲವರು ಅದನ್ನು ಬೆಳಗಿನವರೆಗೆ ಇಟ್ಟುಕೊಂಡಾಗ, ಅದು ಹುಳ ಬಿದ್ದು ಹೊಲಸುವಾಸನೆ ಹುಟ್ಟಿತು. ಆಗ ಮೋಶೆಯು ಅವರ ಮೇಲೆ ಕೋಪಿಸಿಕೊಂಡನು.</verse>
				<verse number="21">ಹೀಗೆ ಅವರಲ್ಲಿ ಪ್ರತಿಯೊಬ್ಬನು ತಿನ್ನುವಷ್ಟು ಪ್ರತಿದಿನದ ಬೆಳಿಗ್ಗೆ ಅದನ್ನು ಕೂಡಿಸುತ್ತಿದ್ದರು. ಬಿಸಿಲು ಬಹಳವಾದಾಗ ಅದು ಕರಗಿ ಹೋಗುತ್ತಿತ್ತು.</verse>
				<verse number="22">ಆರನೆಯ ದಿನದಲ್ಲಿ ಅವರು ಎರಡರಷ್ಟು ಅಂದರೆ ಒಬ್ಬನಿಗೆ ಎರಡು ಓಮೆರದಂತೆ ಕೂಡಿಸಿದ್ದರಿಂದ ಸಭೆಯ ಎಲ್ಲಾ ಅಧಿಕಾರಿಗಳು ಬಂದು ಮೋಶೆಗೆ ತಿಳಿಸಿದರು.</verse>
				<verse number="23">ಅದಕ್ಕೆ ಮೋಶೆ, “ಯೆಹೋವ ದೇವರು ಆಜ್ಞಾಪಿಸಿದ ಮಾತು ಇದೇ: ‘ನಾಳೆ ಯೆಹೋವ ದೇವರಿಗೆ ಪರಿಶುದ್ಧ ಸಬ್ಬತ್ ದಿನವಾಗಿದೆ. ಇಂದೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ಬೆಳಗಿನವರೆಗೆ ಇಟ್ಟುಕೊಳ್ಳಿರಿ,’ ” ಎಂದನು.</verse>
				<verse number="24">ಮೋಶೆಯು ಆಜ್ಞಾಪಿಸಿದ ಪ್ರಕಾರ ಅದನ್ನು ಮರುದಿನದವರೆಗೆ ಇಟ್ಟುಕೊಂಡಾಗ, ಅದು ಹೊಲಸುವಾಸನೆ ಹೊಂದಲಿಲ್ಲ. ಅದರಲ್ಲಿ ಹುಳಗಳೂ ಇರಲಿಲ್ಲ.</verse>
				<verse number="25">ಆಗ ಮೋಶೆಯು, “ಈ ಹೊತ್ತು ಅದನ್ನು ಊಟಮಾಡಿರಿ. ಏಕೆಂದರೆ ಈ ದಿನವು ಯೆಹೋವ ದೇವರ ಸಬ್ಬತ್ ದಿನವಾಗಿದೆ. ಈ ಹೊತ್ತು ನಿಮಗೆ ಹೊಲದಲ್ಲಿ ಆಹಾರ ಸಿಕ್ಕುವುದಿಲ್ಲ.</verse>
				<verse number="26">ಆರು ದಿವಸ ಅದನ್ನು ಕೂಡಿಸಬೇಕು. ಏಳನೆಯ ದಿನ ಸಬ್ಬತ್ ದಿನವಾಗಿರುವುದರಿಂದ ಅದು ದೊರೆಯುವುದಿಲ್ಲ,” ಎಂದನು.</verse>
				<verse number="27">ಏಳನೆಯ ದಿನ ಜನರಲ್ಲಿ ಕೆಲವರು ಕೂಡಿಸುವುದಕ್ಕೆ ಹೊರಗೆ ಹೋದಾಗ, ಅವರಿಗೆ ಏನೂ ಸಿಕ್ಕಲಿಲ್ಲ.</verse>
				<verse number="28">ಆಗ ಯೆಹೋವ ದೇವರು ಮೋಶೆಗೆ, “ಎಷ್ಟು ಕಾಲ ನನ್ನ ಕಟ್ಟಳೆಗಳನ್ನೂ, ನಿಯಮಗಳನ್ನೂ ಕೈಗೊಳ್ಳದೆ ನಿರಾಕರಿಸುವಿರಿ?</verse>
				<verse number="29">ನೋಡಿರಿ, ಯೆಹೋವ ದೇವರಾದ ನಾನು ನಿಮಗೆ ಸಬ್ಬತ್ ದಿನವನ್ನು ಕೊಟ್ಟಿದ್ದರಿಂದಲೇ, ಆರನೆಯ ದಿನದಲ್ಲಿ ನಿಮಗೆ ಎರಡು ದಿನಗಳಿಗೆ ಸಾಕಾಗುವಷ್ಟು ಆಹಾರ ಕೊಟ್ಟಿದ್ದೇನೆ. ಪ್ರತಿಯೊಬ್ಬನೂ ತನ್ನ ತನ್ನ ಸ್ಥಳದಲ್ಲಿ ಇರಲಿ. ಏಳನೆಯ ದಿನದಲ್ಲಿ ಯಾರೂ ತನ್ನ ಸ್ಥಳವನ್ನು ಬಿಟ್ಟುಹೋಗಬಾರದು,” ಎಂದರು.</verse>
				<verse number="30">ಹೀಗೆ ಜನರು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.</verse>
				<verse number="31">ಇಸ್ರಾಯೇಲರು ಆ ಆಹಾರಕ್ಕೆ ಮನ್ನಾ, ಎಂದು ಹೆಸರಿಟ್ಟರು. ಅದು ಕೊತ್ತಂಬರಿ ಬೀಜದಂತೆ ಬೆಳ್ಳಗಿತ್ತು. ಅದರ ರುಚಿಯು ಜೇನುತುಪ್ಪ ಕಲಸಿದ ದೋಸೆಯಂತೆ ಇತ್ತು.</verse>
				<verse number="32">ಮೋಶೆಯು ಅವರಿಗೆ, “ಯೆಹೋವ ದೇವರು ಆಜ್ಞಾಪಿಸಿದ್ದು ಇದೇ: ‘ನಾನು ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಡಿಸಿದಾಗ, ಮರುಭೂಮಿಯಲ್ಲಿ ನಿಮಗೆ ತಿನ್ನಿಸಿದ ರೊಟ್ಟಿಯನ್ನು ನಿಮ್ಮ ಸಂತಾನಗಳು ನೋಡುವಂತೆ ಒಂದು ಓಮೆರ್ ಮನ್ನವನ್ನು ತುಂಬಿಸಿ ಇಟ್ಟಿರಬೇಕು,’ ಎಂಬುದು,” ಎಂದನು.</verse>
				<verse number="33">ಮೋಶೆ ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಒಂದು ಓಮೆರ್ ಮನ್ನವನ್ನು ಅದರಲ್ಲಿ ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕೋಸ್ಕರ ಅದನ್ನು ಯೆಹೋವ ದೇವರ ಮುಂದೆ ಇಡು,” ಎಂದನು.</verse>
				<verse number="34">ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮನ್ನವನ್ನು ಸಂರಕ್ಷಿಸುವುದಕ್ಕೆ ಸಾಕ್ಷಿಯಾಗಿ ಇಟ್ಟನು.</verse>
				<verse number="35">ಇಸ್ರಾಯೇಲರು ತಾವು ವಾಸವಾಗಿರತಕ್ಕ ದೇಶಕ್ಕೆ ಬರುವವರೆಗೆ, ನಲವತ್ತು ವರುಷ ಮನ್ನವನ್ನು ತಿಂದರು. ಕಾನಾನ್ ದೇಶದ ಮೇರೆಗಳಿಗೆ ಸೇರುವವರೆಗೂ ಅವರು ಮನ್ನವನ್ನು ತಿಂದರು.</verse>
				<verse number="36">ಓಮೆರ್ ಎಂದರೆ ಏಫಾದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವಂಥ ಅಳತೆ.</verse>
			</chapter>
			<chapter number="17">
				<verse number="1">ಇಸ್ರಾಯೇಲ್ ಸಮೂಹವೆಲ್ಲಾ ಯೆಹೋವ ದೇವರ ಅಪ್ಪಣೆಯ ಪ್ರಕಾರ ಅವರವರು ಹೊರಡುವ ಕ್ರಮದಂತೆ ಸೀನ್ ಮರುಭೂಮಿಯಿಂದ ಹೊರಟು ರೆಫೀದೀಮಿನಲ್ಲಿ ತಂಗಿದರು. ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ.</verse>
				<verse number="2">ಆದಕಾರಣ ಜನರು ಮೋಶೆಯ ಸಂಗಡ ವಿವಾದ ಮಾಡಿ, “ನಮಗೆ ಕುಡಿಯುವುದಕ್ಕೆ ನೀರು ಕೊಡು,” ಎಂದರು. ಮೋಶೆಯು ಅವರಿಗೆ, “ಏಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಯೆಹೋವ ದೇವರನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.</verse>
				<verse number="3">ಅಲ್ಲಿ ಜನರು ದಾಹಗೊಂಡು ಮೋಶೆಗೆ ವಿರುದ್ಧವಾಗಿ ಗೊಣಗುಟ್ಟಿ, “ನಮ್ನನ್ನೂ, ನಮ್ಮ ಮಕ್ಕಳನ್ನೂ, ನಮ್ಮ ಪಶುಗಳನ್ನೂ ದಾಹದಿಂದ ಕೊಲ್ಲುವುದಕ್ಕಾಗಿ ಏಕೆ ಈಜಿಪ್ಟಿನೊಳಗಿಂದ ಇಲ್ಲಿಗೆ ಬರಮಾಡಿದೆ,” ಎಂದರು.</verse>
				<verse number="4">ಆಗ ಮೋಶೆಯು ಯೆಹೋವ ದೇವರಿಗೆ ಮೊರೆಯಿಟ್ಟು, “ಈ ಜನರಿಗೆ ನಾನೇನು ಮಾಡಲಿ? ಅವರು ಬಹಳಮಟ್ಟಿಗೆ ನನಗೆ ಕಲ್ಲೆಸೆಯುವುದಕ್ಕಿದ್ದಾರೆ,” ಎಂದನು.</verse>
				<verse number="5">ಆಗ ಯೆಹೋವ ದೇವರು ಮೋಶೆಗೆ, “ಜನರ ಮುಂದೆ ಹಾದು ಹೋಗಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರನ್ನು ಕರಕೊಂಡು ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು.</verse>
				<verse number="6">ಅಲ್ಲಿ, ನಾನು ಹೋರೇಬಿನಲ್ಲಿ ಬಂಡೆಯ ಮೇಲೆ ನಿನ್ನ ಮುಂದೆ ನಿಂತುಕೊಳ್ಳುವೆನು, ನೀನು ಬಂಡೆಯನ್ನು ಹೊಡೆಯಬೇಕು. ಆಗ ಜನರು ಕುಡಿಯುವಂತೆ ನೀರು ಹೊರಗೆ ಬರುವುದು,” ಎಂದರು. ಮೋಶೆಯು ಇಸ್ರಾಯೇಲರ ಹಿರಿಯರ ಎದುರಿನಲ್ಲಿ ಹಾಗೆಯೇ ಮಾಡಿದನು.</verse>
				<verse number="7">“ಯೆಹೋವ ದೇವರು ತಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ,” ಎಂದು ಜನರು ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂದು ಹೆಸರಿಟ್ಟನು. ಅಲ್ಲಿ ಇಸ್ರಾಯೇಲರು ತನ್ನೊಡನೆ ವಿವಾದ ಮಾಡಿದ್ದರಿಂದ ಮೆರೀಬಾ ಎಂತಲೂ ಹೆಸರಿಟ್ಟನು.</verse>
				<verse number="8">ಅಮಾಲೇಕ್ಯರು ಬಂದು ರೆಫೀದೀಮಿನಲ್ಲಿ ಇಸ್ರಾಯೇಲರ ಸಂಗಡ ಯುದ್ಧಮಾಡಿದರು.</verse>
				<verse number="9">ಆಗ ಮೋಶೆಯು ಯೆಹೋಶುವನಿಗೆ, “ನೀನು ನಮ್ಮ ಜನರಲ್ಲಿ ಕೆಲವರನ್ನು ಆರಿಸಿಕೊಂಡು ಅಮಾಲೇಕ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗು. ನಾಳೆ ನಾನು ದೇವರ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ಮೇಲೆ ನಿಂತುಕೊಳ್ಳುವೆನು,” ಎಂದನು.</verse>
				<verse number="10">ಯೆಹೋಶುವನು ಮೋಶೆ ಅಪ್ಪಣೆ ಕೊಟ್ಟಂತೆ ಅಮಾಲೇಕ್ಯರೊಂದಿಗೆ ಯುದ್ಧಮಾಡಿದನು. ಮೋಶೆಯೂ ಆರೋನನೂ ಹೂರನೂ ಗುಡ್ಡದ ಮೇಲೆ ಏರಿಹೋದರು.</verse>
				<verse number="11">ಮೋಶೆಯು ತನ್ನ ಕೈಯನ್ನು ಎತ್ತಿದಾಗ, ಇಸ್ರಾಯೇಲರು ಜಯಿಸಿದರು. ಅವನು ತನ್ನ ಕೈಯನ್ನು ಇಳಿಸಿದಾಗ ಅಮಾಲೇಕ್ಯರು ಜಯಿಸಿದರು.</verse>
				<verse number="12">ಆದರೆ ಮೋಶೆಯ ಕೈಗಳು ಭಾರವಾಗಿರಲಾಗಿ ಅವರು ಕಲ್ಲನ್ನು ತಂದು ಇಟ್ಟಾಗ, ಅವನು ಅದರ ಮೇಲೆ ಕೂತುಕೊಂಡನು. ಆರೋನನು ಒಂದು ಕಡೆಯಲ್ಲಿಯೂ, ಹೂರನು ಇನ್ನೊಂದು ಕಡೆಯಲ್ಲಿಯೂ ಮೋಶೆಯ ಕೈಗಳಿಗೆ ಆಧಾರ ಕೊಟ್ಟರು. ಹೀಗೆ ಸೂರ್ಯನು ಮುಳುಗುವವರೆಗೆ ಅವನ ಕೈಗಳು ಇಳಿಯದೆ ನಿಂತೇ ಇದ್ದವು.</verse>
				<verse number="13">ಯೆಹೋಶುವನು ಅಮಾಲೇಕ್ಯರನ್ನೂ, ಅವನ ಜನರನ್ನೂ ಖಡ್ಗದಿಂದ ಸೋಲಿಸಿದನು.</verse>
				<verse number="14">ಆಗ ಯೆಹೋವ ದೇವರು ಮೋಶೆಗೆ, “ಇದನ್ನು ಜ್ಞಾಪಕಾರ್ಥವಾಗಿ ಗ್ರಂಥದಲ್ಲಿ ಬರೆ. ಏಕೆಂದರೆ ನಾನು ಅಮಾಲೇಕ್ಯರ ನೆನಪು ಭೂಲೋಕದಲ್ಲಿ ಇರದಂತೆ ಸಂಪೂರ್ಣವಾಗಿ ಅಳಿಸಿಬಿಡುವೆನು. ಇದನ್ನು ಯೆಹೋಶುವನಿಗೆ ಮನದಟ್ಟಾಗುವಂತೆ ಹೇಳು,” ಎಂದರು.</verse>
				<verse number="15">ಇದಾದ ಮೇಲೆ ಮೋಶೆ ಬಲಿಪೀಠವನ್ನು ಕಟ್ಟಿ, ಅದಕ್ಕೆ “ಯೆಹೋವ ನಿಸ್ಸೀ,” ಎಂದು ಹೆಸರಿಟ್ಟನು.</verse>
				<verse number="16">ಅನಂತರ ಮೋಶೆ, “ಯೆಹೋವ ದೇವರ ಸಿಂಹಾಸನಕ್ಕೆ ವಿರೋಧವಾಗಿ ಅಮಾಲೇಕ್ಯರ ಕೈಗಳು ಎತ್ತಿದ್ದರಿಂದ, ಯೆಹೋವ ದೇವರು ತಲತಲಾಂತರಗಳಲ್ಲಿ ಅಮಾಲೇಕ್ಯರ ವಿರುದ್ಧ ಯುದ್ಧಮಾಡುವರು,” ಎಂದನು.</verse>
			</chapter>
			<chapter number="18">
				<verse number="1">ದೇವರು ಮೋಶೆಗೂ, ತಮ್ಮ ಜನರಾದ ಇಸ್ರಾಯೇಲರಿಗೂ ಮಾಡಿದವುಗಳೆಲ್ಲವನ್ನೂ ಯೆಹೋವ ದೇವರು ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದದ್ದನ್ನೂ, ಮಿದ್ಯಾನಿನ ಯಾಜಕನೂ, ಮೋಶೆಯ ಮಾವನೂ ಆಗಿದ್ದ ಇತ್ರೋವನಿಗೆ ಮುಟ್ಟಿತು.</verse>
				<verse number="2">ಅವನು ತನ್ನ ಬಳಿಗೆ ಕಳುಹಿಸಲಾಗಿದ್ದ ಮೋಶೆಯ ಹೆಂಡತಿ ಚಿಪ್ಪೋರಳನ್ನು ಮತ್ತು ಆಕೆಯ ಇಬ್ಬರು ಪುತ್ರರನ್ನು ಕರೆದುಕೊಂಡು ಬಂದನು.</verse>
				<verse number="3">ಮೋಶೆಯು, “ನಾನು ಪರದೇಶದಲ್ಲಿ ಅನ್ಯನಾಗಿದ್ದೆನು,” ಎಂದು ಹೇಳಿ ಆ ಪುತ್ರರಲ್ಲಿ ಒಬ್ಬನಿಗೆ ಗೇರ್ಷೋಮ್ ಎಂದು ಹೆಸರಿಟ್ಟಿದ್ದನು.</verse>
				<verse number="4">“ನನ್ನ ತಂದೆಯ ದೇವರು ನನ್ನ ಸಹಾಯಕನಾಗಿದ್ದು, ಫರೋಹನ ಖಡ್ಗದಿಂದ ಬಿಡುಗಡೆ ಮಾಡಿದನು,” ಎಂದು ಹೇಳಿ ಇನ್ನೊಬ್ಬ ಮಗನಿಗೆ ಎಲೀಯೆಜೆರ್ ಎಂದು ಹೆಸರಿಟ್ಟಿದ್ದನು.</verse>
				<verse number="5">ಮೋಶೆಯ ಮಾವನಾದ ಇತ್ರೋವನ ಸಂಗಡ ಮೋಶೆಯ ಹೆಂಡತಿಯನ್ನೂ, ಅವನ ಪುತ್ರರನ್ನೂ ಮೋಶೆಯ ಬಳಿಗೆ ಅವನು ತಂಗಿದ್ದ ಮರುಭೂಮಿಯಲ್ಲಿ ದೇವರ ಬೆಟ್ಟದ ಬಳಿಗೆ ಬಂದರು.</verse>
				<verse number="6">ಆಗ ಅವನು ಮೋಶೆಗೆ, “ನಿನ್ನ ಮಾವ ಇತ್ರೋವನೆಂಬ ನಾನು ನಿನ್ನ ಹೆಂಡತಿ, ಇಬ್ಬರು ಮಕ್ಕಳನ್ನೂ ಕರೆದುಕೊಂಡು ನಿನ್ನ ಬಳಿಗೆ ಬಂದಿದ್ದೇನೆ,” ಎಂದು ಹೇಳಿ ಕಳುಹಿಸಿದನು.</verse>
				<verse number="7">ಮೋಶೆಗೆ ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ, ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.</verse>
				<verse number="8">ಇಸ್ರಾಯೇಲರಿಗೋಸ್ಕರ ಯೆಹೋವ ದೇವರು ಫರೋಹನಿಗೂ ಈಜಿಪ್ಟಿನವರಿಗೂ ಮಾಡಿದ್ದೆಲ್ಲವನ್ನೂ, ಅವರಿಗೆ ಒದಗಿದ ಎಲ್ಲಾ ಸಂಕಟವನ್ನೂ ಯೆಹೋವ ದೇವರು ತಮ್ಮನ್ನು ಹೇಗೆ ತಪ್ಪಿಸಿದನೆಂಬುದನ್ನೂ ಮೋಶೆಯು ತನ್ನ ಮಾವನಿಗೆ ತಿಳಿಯಪಡಿಸಿದನು.</verse>
				<verse number="9">ಇದಲ್ಲದೆ ಯೆಹೋವ ದೇವರು ಇಸ್ರಾಯೇಲರಿಗೆ ಮಾಡಿದ ಎಲ್ಲಾ ಉಪಕಾರಕ್ಕಾಗಿಯೂ, ಯೆಹೋವ ದೇವರು ಅವರನ್ನು ಈಜಿಪ್ಟಿನವರ ಕೈಗಳಿಂದ ತಪ್ಪಿಸಿದ್ದಕ್ಕಾಗಿಯೂ ಇತ್ರೋವನು ಸಂತೋಷಪಟ್ಟನು.</verse>
				<verse number="10">ಇತ್ರೋವನು, “ಈಜಿಪ್ಟಿನವರ ಕೈಗೂ ಫರೋಹನ ಕೈಗೂ ಈಜಿಪ್ಟಿನವರ ಅಧಿಕಾರದೊಳಗಿಂದಲೂ ಜನರನ್ನು ತಪ್ಪಿಸಿದ ಯೆಹೋವ ದೇವರಿಗೆ ಸ್ತೋತ್ರವಾಗಲಿ.</verse>
				<verse number="11">ಎಲ್ಲಾ ದೇವರುಗಳಿಗಿಂತ ಯೆಹೋವ ದೇವರೇ ದೊಡ್ಡವರೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಏಕೆಂದರೆ ಈಜಿಪ್ಟಿನವರು ಗರ್ವಪಟ್ಟಿದ್ದರಿಂದ ಯೆಹೋವ ದೇವರು ಅವರನ್ನು ತಗ್ಗಿಸಿದರು,” ಎಂದನು.</verse>
				<verse number="12">ಮೋಶೆಯ ಮಾವ ಇತ್ರೋವನು ದಹನಬಲಿಯನ್ನೂ, ಯಜ್ಞಗಳನ್ನೂ ದೇವರಿಗಾಗಿ ತೆಗೆದುಕೊಂಡು ಬಂದನು. ಆರೋನನೂ, ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನವನ್ನು ಮಾಡುವುದಕ್ಕೆ ಬಂದರು.</verse>
				<verse number="13">ಮರುದಿನ ಮೋಶೆಯು ಜನರಿಗೆ ನ್ಯಾಯತೀರಿಸುವುದಕ್ಕೆ ಕೂತುಕೊಂಡಾಗ, ಜನರು ಬೆಳಗಿನಿಂದ ಸಂಜೆಯವರೆಗೆ ಮೋಶೆಯ ಬಳಿಯಲ್ಲಿ ನಿಂತಿದ್ದರು.</verse>
				<verse number="14">ಇತ್ರೋವನು ಮೋಶೆಯು ಜನರಿಗಾಗಿ ಮಾಡುವುದನ್ನೆಲ್ಲಾ ನೋಡಿದಾಗ, ಅವನು ಮೋಶೆಗೆ, “ಇದೇನು ಜನರಿಗೆ ನೀನು ಮಾಡುವುದು? ಏಕೆ ನೀನೊಬ್ಬನೇ ನ್ಯಾಯಾಧೀಶನಾಗಿ ಕೂತಿರಲಾಗಿ, ಜನರು ಬೆಳಗಿನಿಂದ ಸಂಜೆಯವರೆಗೆ ನಿನ್ನ ಬಳಿಯಲ್ಲಿ ನಿಂತಿರಬೇಕು?” ಎಂದನು.</verse>
				<verse number="15">ಅದಕ್ಕೆ ಮೋಶೆಯು ತನ್ನ ಮಾವನಿಗೆ, “ದೇವರ ವಿಷಯವಾಗಿ ಕೇಳುವುದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ.</verse>
				<verse number="16">ಅವರಿಗೆ ಏನಾದರೂ ವ್ಯಾಜ್ಯವಿದ್ದರೆ ನನ್ನ ಬಳಿಗೆ ಬರುತ್ತಾರೆ. ನಾನು ಒಬ್ಬರ ಸಂಗಡ ಇನ್ನೊಬ್ಬರಿಗಿರುವ ವ್ಯಾಜ್ಯವನ್ನು ತೀರಿಸುತ್ತೇನೆ. ದೇವರ ನಿಯಮಗಳನ್ನೂ, ಆಜ್ಞೆಗಳನ್ನೂ ಅವರಿಗೆ ತಿಳಿಯಪಡಿಸುತ್ತೇನೆ,” ಎಂದನು.</verse>
				<verse number="17">ಮೋಶೆಯ ಮಾವನು ಅವನಿಗೆ, “ನೀನು ಮಾಡುವ ಕಾರ್ಯವಿಧಾನ ಸರಿಯಲ್ಲ,</verse>
				<verse number="18">ನೀನೂ, ನಿನ್ನ ಸಂಗಡ ಇರುವ ಜನರೂ ಖಂಡಿತ ಬಳಲುವಿರಿ. ಏಕೆಂದರೆ ಇದು ನಿನಗೆ ಬಹು ಭಾರ. ನೀನೊಬ್ಬನೇ ಇದನ್ನು ಮಾಡಲಾರೆ.</verse>
				<verse number="19">ಆದ್ದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ. ದೇವರು ನಿನ್ನ ಸಂಗಡ ಇರಲಿ. ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು, ಅವರ ವ್ಯಾಜ್ಯಗಳನ್ನು ದೇವರ ಮುಂದೆ ತರಬೇಕು.</verse>
				<verse number="20">ನಿಯಮಗಳನ್ನೂ, ಆಜ್ಞೆಗಳನ್ನೂ ಅವರಿಗೆ ಕಲಿಸಿ, ಅವರು ನಡೆಯಬೇಕಾದ ಮಾರ್ಗವನ್ನೂ, ಅವರು ಮಾಡಬೇಕಾದ ಕೆಲಸವನ್ನೂ ಅವರಿಗೆ ತೋರಿಸಬೇಕು.</verse>
				<verse number="21">ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯಪಡುವವರೂ, ಸತ್ಯವಂತರೂ, ದುರಾಶೆಯನ್ನು ಹಗೆಮಾಡುವವರೂ ಆಗಿರುವವರನ್ನು ಸಾವಿರ ಮಂದಿಯ ಮೇಲೆಯೂ, ನೂರು ಮಂದಿಯ ಮೇಲೆಯೂ, ಐವತ್ತು ಮಂದಿಯ ಮೇಲೆಯೂ, ಹತ್ತು ಮಂದಿಯ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸು.</verse>
				<verse number="22">ಇವರು ಎಲ್ಲಾ ಕಾಲಗಳಲ್ಲಿಯೂ ಜನರಿಗೆ ನ್ಯಾಯತೀರಿಸಲಿ. ಆದರೆ ದೊಡ್ಡ ವ್ಯಾಜ್ಯಗಳನ್ನೆಲ್ಲಾ ನಿನ್ನ ಮುಂದೆ ತಂದು, ಸಣ್ಣ ವ್ಯಾಜ್ಯಗಳನ್ನೆಲ್ಲಾ ತಾವೇ ತೀರಿಸಲಿ. ಆಗ ನಿನಗೆ ಸುಲಭವಾಗುವುದು. ಅವರೂ ನಿನ್ನ ಸಂಗಡ ಭಾರವನ್ನು ಹೊರುವರು.</verse>
				<verse number="23">ಈ ಕಾರ್ಯವನ್ನು ಮಾಡುವುದಕ್ಕೆ ದೇವರು ನಿನಗೆ ಅಪ್ಪಣೆ ಕೊಟ್ಟರೆ, ಆಗ ನೀನು ಇದನ್ನು ನಿರ್ವಹಿಸಲು ಶಕ್ತನಾಗುವೆ. ಈ ಜನರೆಲ್ಲರೂ ತಮ್ಮ ತಮ್ಮ ಸ್ಥಳಗಳಿಗೆ ಸಮಾಧಾನದಿಂದ ಹೋಗುವರು,” ಎಂದನು.</verse>
				<verse number="24">ಮೋಶೆಯು ತನ್ನ ಮಾವನ ಮಾತನ್ನು ಕೇಳಿ, ಅವನು ಹೇಳಿದ್ದನ್ನೆಲ್ಲಾ ಮಾಡಿದನು.</verse>
				<verse number="25">ಮೋಶೆಯು ಇಸ್ರಾಯೇಲರಲ್ಲಿ ಇರುವ ಸಮರ್ಥರನ್ನು ಆರಿಸಿಕೊಂಡು, ಅವರನ್ನು ಜನರ ಮೇಲೆ ಮುಖ್ಯಸ್ಥರನ್ನಾಗಿ ಮಾಡಿ, ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ, ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ನೇಮಿಸಿದನು.</verse>
				<verse number="26">ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ, ಕಠಿಣ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಿದ್ದರು. ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.</verse>
				<verse number="27">ತರುವಾಯ ಮೋಶೆಯು ತನ್ನ ಮಾವ ಇತ್ರೋವನಿಗೆ ಸಾಗಕಳುಹಿಸಿದಾಗ, ಅವನು ಸ್ವದೇಶಕ್ಕೆ ಹೊರಟುಹೋದನು.</verse>
			</chapter>
			<chapter number="19">
				<verse number="1">ಇಸ್ರಾಯೇಲರು ಈಜಿಪ್ಟನ್ನು ಬಿಟ್ಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಮರುಭೂಮಿಗೆ ಬಂದರು.</verse>
				<verse number="2">ಅವರು ರೆಫೀದೀಮಿನಿಂದ ಹೊರಟು, ಸೀನಾಯಿ ಮರುಭೂಮಿಗೆ ಬಂದು, ಮರುಭೂಮಿಯಲ್ಲಿ ಡೇರೆ ಹಾಕಿ, ಬೆಟ್ಟಕ್ಕೆದುರಾಗಿ ಇಳಿದುಕೊಂಡರು.</verse>
				<verse number="3">ಮೋಶೆಯು ದೇವರ ಸನ್ನಿಧಿಗೆ ಬೆಟ್ಟದ ಮೇಲೆ ಹೋದನು. ಆಗ ಯೆಹೋವ ದೇವರು ಸೀನಾಯಿ ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ, “ನೀನು ಯಾಕೋಬನ ಮನೆತನದವರಾದ ಇಸ್ರಾಯೇಲರಿಗೆ ಇದನ್ನು ತಿಳಿಸು:</verse>
				<verse number="4">‘ನಾನು ಈಜಿಪ್ಟಿನವರಿಗೆ ಮಾಡಿದ್ದನ್ನೂ, ಹದ್ದು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಮೇಲೆ ಹೊತ್ತು ಬರುವಂತೆ ನಿಮ್ಮನ್ನು ಈ ಸ್ಥಳಕ್ಕೆ ಬರಮಾಡಿದ್ದನ್ನೆಲ್ಲಾ ನೀವು ನೋಡಿದ್ದೀರಿ.</verse>
				<verse number="5">ಆದ್ದರಿಂದ ಈಗ ನೀವು ನನ್ನ ಮಾತನ್ನು ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿದರೆ, ಸಮಸ್ತ ಜನರಲ್ಲಿ ನೀವು ನನ್ನ ಸಂಗ್ರಹಿಸಿದ ಸೊತ್ತಾಗಿರುವಿರಿ. ಏಕೆಂದರೆ ಭೂಮಿಯೆಲ್ಲಾ ನನ್ನದೇ.</verse>
				<verse number="6">ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ.’ ಇಸ್ರಾಯೇಲರಿಗೆ ನೀನು ಹೇಳಬೇಕಾದ ಮಾತುಗಳು ಇವೇ,” ಎಂದರು.</verse>
				<verse number="7">ಆಗ ಮೋಶೆಯು ಇಳಿದುಬಂದು ಜನರ ಹಿರಿಯರನ್ನು ಕರೆದು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಈ ಮಾತುಗಳನ್ನೆಲ್ಲಾ ಅವರ ಮುಂದೆ ಇಟ್ಟನು.</verse>
				<verse number="8">ಜನರೆಲ್ಲಾ ಒಂದಾಗಿ ಉತ್ತರಕೊಟ್ಟು, “ಯೆಹೋವ ದೇವರು ಹೇಳಿದ್ದನ್ನೆಲ್ಲಾ ಮಾಡುತ್ತೇವೆ,” ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಯೆಹೋವ ದೇವರಿಗೆ ಹೇಳಿದನು.</verse>
				<verse number="9">ಯೆಹೋವ ದೇವರು ಮೋಶೆಗೆ, “ನಾನು ನಿನ್ನ ಸಂಗಡ ಮಾತನಾಡುವುದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ದಟ್ಟವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ,” ಎಂದರು. ಮೋಶೆಯು ಜನರ ಮಾತುಗಳನ್ನು ಯೆಹೋವ ದೇವರಿಗೆ ತಿಳಿಸಿದನು.</verse>
				<verse number="10">ಆಗ ಯೆಹೋವ ದೇವರು ಮೋಶೆಗೆ, “ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು. ಅವರು ತಮ್ಮ ವಸ್ತ್ರಗಳನ್ನು ತೊಳೆದುಕೊಳ್ಳಲಿ.</verse>
				<verse number="11">ಮೂರನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ. ಏಕೆಂದರೆ ಮೂರನೆಯ ದಿನದಲ್ಲಿ ಯೆಹೋವ ದೇವರು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವರು.</verse>
				<verse number="12">ಜನರಿಗೋಸ್ಕರ ಸುತ್ತಲೂ ಮೇರೆಗಳನ್ನು ಮಾಡಿಸಿ, ‘ಅವರು ಬೆಟ್ಟವನ್ನು ಏರದಂತೆಯೂ ಅದರ ಮೇರೆಯನ್ನು ಮುಟ್ಟದಂತೆಯೂ ಜಾಗ್ರತೆಯಾಗಿರಬೇಕು. ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸತ್ತು ಹೋಗುವರು.</verse>
				<verse number="13">ಯಾರೂ ಅಂಥವರನ್ನು ಮುಟ್ಟಬಾರದು. ಮುಟ್ಟಿದ ಪಶುವಾಗಲಿ, ಮನುಷ್ಯನಾಗಲಿ ನಿಶ್ಚಯವಾಗಿ ಕಲ್ಲೆಸೆದು ಕೊಲ್ಲಬೇಕು. ಇಲ್ಲವೆ ಈಟಿಯಿಂದ ತಿವಿಯಬೇಕು.’ ದೀರ್ಘವಾಗಿ ತುತೂರಿ ಊದುವ ಸಮಯದಲ್ಲಿ ಅವರು ಬೆಟ್ಟದ ಬಳಿಗೆ ಬರಬೇಕು,” ಎಂದರು.</verse>
				<verse number="14">ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು.</verse>
				<verse number="15">ಅವನು ಜನರಿಗೆ, “ಮೂರನೆಯ ದಿನಕ್ಕಾಗಿ ಸಿದ್ಧರಾಗಿರಿ, ನೀವು ಲೈಂಗಿಕ ಸಂಬಂಧದಿಂದ ದೂರವಾಗಿರಿ,” ಎಂದನು.</verse>
				<verse number="16">ಮೂರನೆಯ ದಿನದಲ್ಲಿ ಉದಯವಾದಾಗ, ಬೆಟ್ಟದ ಮೇಲೆ ಗುಡುಗು, ಮಿಂಚು, ದಟ್ಟವಾದ ಮೇಘ ಮತ್ತು ತುತೂರಿಯ ಮಹಾ ಧ್ವನಿ ಉಂಟಾದವು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿದರು.</verse>
				<verse number="17">ಆಗ ಮೋಶೆಯು ದೇವರನ್ನು ಸಂಧಿಸುವುದಕ್ಕೆ ಜನರನ್ನು ಪಾಳೆಯದೊಳಗಿಂದ ಹೊರಗೆ ಬರಮಾಡಿದನು. ಆಗ ಅವರು ಬೆಟ್ಟದ ಕೆಳಗೆ ನಿಂತುಕೊಂಡರು.</verse>
				<verse number="18">ಯೆಹೋವ ದೇವರು ಅಗ್ನಿಯೊಳಗೆ ಬೆಟ್ಟದ ಮೇಲೆ ಇಳಿದಿದ್ದರಿಂದ ಸೀನಾಯಿ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.</verse>
				<verse number="19">ತುತೂರಿಯ ಧ್ವನಿಯು ಬರಬರುತ್ತಾ ಹೆಚ್ಚಾಗುತ್ತಾ ಇತ್ತು. ಆಗ ಮೋಶೆಯು ದೇವರೊಡನೆ ಮಾತನಾಡಿದನು. ಅವನಿಗೆ ದೇವರು ಉತ್ತರಕೊಟ್ಟರು.</verse>
				<verse number="20">ಯೆಹೋವ ದೇವರು ಸೀನಾಯಿ ಬೆಟ್ಟದ ತುದಿಯಲ್ಲಿ ಇಳಿದುಬಂದು ಮೋಶೆಯನ್ನು ಬೆಟ್ಟದ ತುದಿಗೆ ಕರೆದರು. ಮೋಶೆಯು ಮೇಲೆ ಹೋದನು.</verse>
				<verse number="21">ಯೆಹೋವ ದೇವರು ಮೋಶೆಗೆ, “ನೀನು ಇಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ಯೆಹೋವ ದೇವರನ್ನು ನೋಡುವದಕ್ಕಾಗಿ ಮುಂದೆ ಬಂದರೆ, ಅವರಲ್ಲಿ ಬಹಳ ಜನರು ಸಾಯುವರು.</verse>
				<verse number="22">ಯೆಹೋವ ದೇವರ ಸಮೀಪಕ್ಕೆ ಬರುವ ಯಾಜಕರು ಸಹ ಯೆಹೋವ ದೇವರು ಅವರನ್ನು ಸಾಯಿಸದಂತೆ ತಮ್ಮನ್ನು ಶುದ್ಧಿಮಾಡಿಕೊಳ್ಳಲಿ, ಇಲ್ಲವಾದರೆ ಅವರನ್ನೂ ನಾನು ತಟ್ಟನೆ ನಾಶಮಾಡುವೆನು,” ಎಂದರು.</verse>
				<verse number="23">ಮೋಶೆಯು ಯೆಹೋವ ದೇವರಿಗೆ, “ಜನರು ಸೀನಾಯಿ ಬೆಟ್ಟವನ್ನು ಏರಲಾರರು. ಬೆಟ್ಟಕ್ಕೆ ಮೇರೆಗಳನ್ನು ಹಾಕಿ ಅದನ್ನು ಶುದ್ಧಮಾಡೆಂದು ನೀವೇ ನಮ್ಮನ್ನು ಎಚ್ಚರಿಸಿದ್ದೀರಿ,” ಎಂದನು.</verse>
				<verse number="24">ಆಗ ಯೆಹೋವ ದೇವರು ಅವನಿಗೆ, “ನೀನು ಇಳಿದು ಹೋಗಿ, ಆರೋನನನ್ನು ಕರೆದುಕೊಂಡು ಇಲ್ಲಿಗೆ ಬಾ. ಆದರೆ ಯೆಹೋವ ದೇವರಿಂದ ಸಂಹಾರವಾಗದಂತೆ ಯಾಜಕರೂ ಜನರೂ ಮುಂದೆ ಯೆಹೋವ ದೇವರ ಬಳಿಗೆ ಬಾರದೇ ಇರಲಿ,” ಎಂದರು.</verse>
				<verse number="25">ಮೋಶೆಯು ಜನರ ಬಳಿಗೆ ಇಳಿದು ಹೋಗಿ ಅವರಿಗೆ ಇದನ್ನೆಲ್ಲಾ ಹೇಳಿದನು.</verse>
			</chapter>
			<chapter number="20">
				<verse number="1">ದೇವರು ಈ ಎಲ್ಲಾ ವಾಕ್ಯಗಳನ್ನು ಹೇಳಿದರು:</verse>
				<verse number="2">“ನಿನ್ನನ್ನು ಈಜಿಪ್ಟ್ ದೇಶದಿಂದಲೂ ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.</verse>
				<verse number="3">“ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.</verse>
				<verse number="4">ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.</verse>
				<verse number="5">ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.</verse>
				<verse number="6">ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಸಾವಿರ ತಲೆಗಳವರೆಗೆ ಪ್ರೀತಿ ತೋರಿಸುತ್ತೇನೆ.</verse>
				<verse number="7">ನಿನ್ನ ದೇವರಾದ ಯೆಹೋವ ದೇವರ ಹೆಸರನ್ನು ದುರುಪಯೋಗಮಾಡಬಾರದು. ಏಕೆಂದರೆ ಯೆಹೋವ ದೇವರು ತಮ್ಮ ಹೆಸರನ್ನು ದುರುಪಯೋಗಮಾಡುವವರನ್ನು ಶಿಕ್ಷಿಸದೆ ಬಿಡುವುದಿಲ್ಲ.</verse>
				<verse number="8">ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಜ್ಞಾಪಕದಲ್ಲಿಟ್ಟುಕೊಂಡು ಆಚರಿಸಿರಿ.</verse>
				<verse number="9">ಆರು ದಿನಗಳಲ್ಲಿ ನೀನು ದುಡಿದು, ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.</verse>
				<verse number="10">ಆದರೆ ಏಳನೆಯ ದಿನ ನಿನ್ನ ದೇವರಾದ ಯೆಹೋವ ದೇವರ ಸಬ್ಬತ್ ದಿನವಾಗಿದೆ. ಅದರಲ್ಲಿ ನೀನಾಗಲೀ, ನಿನ್ನ ಮಗನಾಗಲೀ, ನಿನ್ನ ಮಗಳಾಗಲೀ, ನಿನ್ನ ದಾಸನಾಗಲೀ, ನಿನ್ನ ದಾಸಿಯಾಗಲೀ, ನಿನ್ನ ಪಶುಗಳಾಗಲೀ ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಸಹ ಯಾವ ಕೆಲಸವನ್ನೂ ಮಾಡಬಾರದು.</verse>
				<verse number="11">ಏಕೆಂದರೆ ಆರು ದಿನಗಳಲ್ಲಿ ಯೆಹೋವ ದೇವರು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಉಂಟುಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದ್ದರಿಂದ ಯೆಹೋವ ದೇವರು ಸಬ್ಬತ್ ದಿನವನ್ನು ಆಶೀರ್ವದಿಸಿ, ಅದನ್ನು ಪರಿಶುದ್ಧ ಮಾಡಿದರು.</verse>
				<verse number="12">ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನೀನು ಬಹುಕಾಲ ಬಾಳುವಂತೆ ನಿನ್ನ ತಂದೆತಾಯಿಗಳನ್ನು ಗೌರವಿಸು.</verse>
				<verse number="13">ಕೊಲೆ ಮಾಡಬೇಡ.</verse>
				<verse number="14">ವ್ಯಭಿಚಾರ ಮಾಡಬೇಡ.</verse>
				<verse number="15">ಕದಿಯಬೇಡ.</verse>
				<verse number="16">ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಬೇಡ.</verse>
				<verse number="17">ನಿನ್ನ ನೆರೆಯವನ ಮನೆಯನ್ನು ಆಶಿಸಬೇಡ. ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ. ಅವನ ದಾಸನನ್ನಾಗಲಿ, ಅವನ ದಾಸಿಯನ್ನಾಗಲಿ, ಅವನ ಎತ್ತನ್ನಾಗಲಿ, ಅವನ ಕತ್ತೆಯನ್ನಾಗಲಿ, ನಿನ್ನ ನೆರೆಯವನಿಗೆ ಇರುವ ಯಾವುದನ್ನೂ ಆಶಿಸಬೇಡ.”</verse>
				<verse number="18">ಜನರೆಲ್ಲಾ ಗುಡುಗುಗಳನ್ನೂ ಮಿಂಚುಗಳನ್ನೂ ತುತೂರಿಯ ಶಬ್ದವನ್ನೂ ಬೆಟ್ಟದಲ್ಲಿ ಹೊಗೆ ಹಾಯುವುದನ್ನೂ ನೋಡಿದರು. ಜನರು ಅದನ್ನು ನೋಡಿ ನಡುಗುತ್ತಾ ದೂರಹೋಗಿ ನಿಂತುಕೊಂಡರು.</verse>
				<verse number="19">ಅವರು ಮೋಶೆಗೆ, “ನೀನೇ ನಮ್ಮ ಸಂಗಡ ಮಾತನಾಡು, ಆಗ ನಾವು ಕೇಳುವೆವು. ನಾವು ಸಾಯದ ಹಾಗೆ ದೇವರು ನಮ್ಮೊಂದಿಗೆ ನೇರವಾಗಿ ಮಾತನಾಡಲು ಬಿಡಬೇಡಿ,” ಎಂದು ವಿನಂತಿಸಿಕೊಂಡರು.</verse>
				<verse number="20">ಆಗ ಮೋಶೆಯು ಜನರಿಗೆ, “ಭಯಪಡಬೇಡಿರಿ. ಏಕೆಂದರೆ ನಿಮ್ಮನ್ನು ಪರೀಕ್ಷಿಸುವುದಕ್ಕೋಸ್ಕರವೂ ನೀವು ಪಾಪಮಾಡದಂತೆ ಅವರ ಭಯವು ನಿಮಗಿರಲೆಂದೂ ದೇವರು ಬಂದಿದ್ದಾರೆ,” ಎಂದನು.</verse>
				<verse number="21">ಆಗ ಜನರು ದೂರದಲ್ಲಿ ನಿಂತರು. ಮೋಶೆಯು ದೇವರಿದ್ದ ಕಾರ್ಗತ್ತಲೆಯ ಹತ್ತಿರ ಬಂದನು.</verse>
				<verse number="22">ಯೆಹೋವ ದೇವರು ಮೋಶೆಗೆ, “ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು, ‘ನಾನು ಆಕಾಶದಿಂದ ನಿಮ್ಮ ಸಂಗಡ ಮಾತನಾಡಿದ್ದನ್ನು ನೀವು ನೋಡಿದ್ದೀರಿ.</verse>
				<verse number="23">ನನ್ನ ಹೊರತಾಗಿ ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.</verse>
				<verse number="24">“ ‘ಬಲಿಪೀಠವನ್ನು ಮಣ್ಣಿನಿಂದ ಮಾಡಬೇಕು. ಅದರ ಮೇಲೆ ನಿಮ್ಮ ಸಮರ್ಪಣೆಗಳಾದ ದಹನಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಕುರಿಮೇಕೆಗಳನ್ನೂ ದನಗಳನ್ನೂ ಅರ್ಪಿಸಬೇಕು. ನಾನು ನನ್ನ ಹೆಸರನ್ನು ಗೌರವಿಸುವಂತೆ ಮಾಡುವ ಎಲ್ಲಾ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.</verse>
				<verse number="25">ಬಲಿಪೀಠವನ್ನು ಕಲ್ಲಿನಿಂದ ಮಾಡಿದರೆ, ಅದನ್ನು ಕೆತ್ತಿದ ಕಲ್ಲಿನಿಂದ ಕಟ್ಟಬಾರದು. ಏಕೆಂದರೆ ಉಳಿಯನ್ನು ಅದರ ಮೇಲೆ ಉಪಯೋಗಿಸಿದರೆ, ಅದನ್ನು ಅಪವಿತ್ರಮಾಡಿದ ಹಾಗಾಗುತ್ತದೆ.</verse>
				<verse number="26">ನನಗಾಗಿ ಬಲಿಪೀಠದ ಮೇಲೆ ಹೋಗಲು ಹತ್ತುವಾಗ ನಿನ್ನ ಬೆತ್ತಲೆತನ ಕಾಣಬಾರದು. ಅದರ ಮೆಟ್ಟಲುಗಳನ್ನು ಹತ್ತಬಾರದು,’ ಎಂದು ಹೇಳಿದರು.</verse>
			</chapter>
			<chapter number="21">
				<verse number="1">“ಈಗ ಅವರ ಮುಂದೆ ನೀನು ಇಡತಕ್ಕ ನ್ಯಾಯವಿಧಿಗಳು ಇವೇ.</verse>
				<verse number="2">“ನೀನು ಹಿಬ್ರಿಯ ದಾಸನನ್ನು ಕೊಂಡುಕೊಂಡರೆ, ಅವನು ಆರು ವರ್ಷ ನಿನಗೆ ಸೇವೆಮಾಡಬೇಕು. ಏಳನೆಯ ವರ್ಷದಲ್ಲಿ ಅವನು ಏನೂ ಕೊಡದೆ ಬಿಡುಗಡೆಯಾಗಿ ಹೋಗಲಿ.</verse>
				<verse number="3">ಅವನು ಒಬ್ಬನಾಗಿ ಬಂದಿದ್ದರೆ, ಒಬ್ಬನಾಗಿಯೇ ಹೋಗಬೇಕು. ಅವನು ಮದುವೆಯಾದವನಾಗಿದ್ದರೆ, ಅವನ ಹೆಂಡತಿಯು ಅವನ ಸಂಗಡ ಹೋಗಬೇಕು.</verse>
				<verse number="4">ಅವನ ಯಜಮಾನನು ಅವನಿಗೆ ಮದುವೆಮಾಡಿಸಿ ಆ ಹೆಂಡತಿಗೆ ಗಂಡು ಇಲ್ಲವೆ ಹೆಣ್ಣುಮಕ್ಕಳು ಹುಟ್ಟಿದ್ದರೆ, ಆ ಹೆಂಡತಿಯೂ ಅವಳ ಮಕ್ಕಳೂ ಯಜಮಾನನ ಸೊತ್ತಾಗುವರು. ಅವನು ಒಬ್ಬನಾಗಿಯೇ ಹೋಗಬೇಕು.</verse>
				<verse number="5">“ಆದರೆ ದಾಸನು, ‘ನಾನು ನನ್ನ ಯಜಮಾನನನ್ನೂ ನನ್ನ ಹೆಂಡತಿಯನ್ನೂ ನನ್ನ ಮಕ್ಕಳನ್ನೂ ಪ್ರೀತಿಮಾಡುತ್ತೇನೆ. ಆದ್ದರಿಂದ ನಾನು ಬಿಡುಗಡೆಯಾಗಿ ಹೋಗುವುದಕ್ಕೆ ಮನಸ್ಸಿಲ್ಲ,’ ಎಂದು ಸ್ವಷ್ಟವಾಗಿ ಹೇಳಿದರೆ,</verse>
				<verse number="6">ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು, ಬಾಗಿಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ, ಅವನ ಯಜಮಾನನು ಅವನ ಕಿವಿಯನ್ನು ದಬ್ಬಳದಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ದಾಸನಾಗಿರಬೇಕು.</verse>
				<verse number="7">“ಒಬ್ಬನು ತನ್ನ ಮಗಳನ್ನು ದಾಸಿಯನ್ನಾಗಿ ಮಾರಿದರೆ, ದಾಸರು ಹೋಗುವಂತೆ ಆಕೆಯು ಹೋಗಿಬಿಡಬಾರದು.</verse>
				<verse number="8">ಅವಳನ್ನು ನಿಶ್ಚಯಮಾಡಿಕೊಂಡ ಯಜಮಾನನಿಗೆ ಒಂದು ವೇಳೆ ಅವಳು ಮೆಚ್ಚಿಕೆಯಾಗದೆ ಹೋದರೆ, ಆಗ ಅವಳು ಬಿಡುಗಡೆಯಾಗುವಂತೆ ಮಾಡಲಿ. ಅವನು ಅವಳನ್ನು ವಂಚಿಸಿದ್ದರಿಂದ ಯೆಹೂದ್ಯರಲ್ಲದವರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ.</verse>
				<verse number="9">ಒಂದು ವೇಳೆ ಅವನು ತನ್ನ ಮಗನಿಗೆ ಅವಳನ್ನು ನಿಶ್ಚಯ ಮಾಡಿದರೆ, ಹೆಣ್ಣು ಮಕ್ಕಳ ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕು.</verse>
				<verse number="10">ಒಂದು ವೇಳೆ ಅವನು ಇನ್ನೊಬ್ಬಳನ್ನು ಮದುವೆಯಾದರೆ, ಮೊದಲನೆಯವಳಿಗೆ ಅನ್ನ, ವಸ್ತ್ರ, ದಾಂಪತ್ಯದ ಹಕ್ಕನ್ನು ಕಡಿಮೆ ಮಾಡಬಾರದು.</verse>
				<verse number="11">ಈ ಮೂರನ್ನು ಅವಳಿಗೆ ಮಾಡದೆ ಹೋದರೆ, ಅವಳು ಏನೂ ಕ್ರಯ ಕೊಡದೆ, ಸ್ವತಂತ್ರಳಾಗಿ ಹೋಗಿಬಿಡಬಹುದು.</verse>
				<verse number="12">“ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು.</verse>
				<verse number="13">ಆದರೆ ಕೊಲ್ಲಬೇಕೆಂಬ ಯೋಚನೆ ಇಲ್ಲದೆ ದೇವರು ಅನುಮತಿಸಿದ್ದರಿಂದ ಕೊಲೆಯಾದರೆ, ಕೊಂದವನು ಓಡಿಹೋಗುವಂತೆ ಅವನಿಗೆ ಒಂದು ಸ್ಥಳವನ್ನು ನಾನು ನೇಮಿಸುವೆನು.</verse>
				<verse number="14">ಆದರೆ ಒಬ್ಬನು ಮತ್ತೊಬ್ಬನನ್ನು ಕೊಲ್ಲಬೇಕೆಂಬ ಉದ್ದೇಶ ಇಟ್ಟುಕೊಂಡು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಬಲಿಪೀಠದಿಂದ ದೂರ ತೆಗೆದುಕೊಂಡುಹೋಗಿ ಕೊಂದುಹಾಕಬೇಕು.</verse>
				<verse number="15">“ತಂದೆತಾಯಿಗಳನ್ನು ಹೊಡೆಯುವವನು ಖಂಡಿತವಾಗಿ ಮರಣದಂಡನೆ ಹೊಂದಬೇಕು.</verse>
				<verse number="16">“ಒಬ್ಬನು ಮತ್ತೊಬ್ಬನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ, ಇಲ್ಲವೆ ಅವನು ಬಂಧನಕ್ಕೊಳಗಾದಾಗ ಅಪಹರಿಸಲಾದವನು ಅವನೊಂದಿಗಿದ್ದರೆ, ಅವನನ್ನು ಮರಣದಂಡನೆಗೆ ಗುರಿಮಾಡಬೇಕು.</verse>
				<verse number="17">“ತಂದೆಗಾದರೂ ತಾಯಿಗಾದರೂ ಶಾಪಕೊಟ್ಟವನು ಖಂಡಿತವಾಗಿ ಸಾಯಬೇಕು.</verse>
				<verse number="18">“ಇಬ್ಬರು ಜಗಳವಾಡುವಾಗ ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಾಗಲಿ, ಮುಷ್ಟಿಯಿಂದಾಗಲಿ ಹೊಡೆದದ್ದರಿಂದ ಅವನು ಸಾಯದೆ ಗಾಯಗೊಂಡು, ಹಾಸಿಗೆ ಹಿಡಿದು, ಕ್ರಮೇಣ</verse>
				<verse number="19">ಅವನು ಎದ್ದು ಕೋಲೂರಿಕೊಂಡು ತಿರುಗಾಡುವುದಾದರೆ, ಅವನನ್ನು ಹೊಡೆದವನು ಅಪರಾಧವಿಲ್ಲದೆ ಹೋಗಬೇಕು. ಪೆಟ್ಟು ತಿಂದವನು ಗುಣಹೊಂದುವವರೆಗೆ ಆಗುವ ಖರ್ಚನ್ನು ಹೊಡೆದವನು ಕೊಡಬೇಕು ಮತ್ತು ಅವನನ್ನು ಪೂರ್ಣ ಸ್ವಸ್ಥನಾಗುವಂತೆ ಮಾಡಬೇಕು.</verse>
				<verse number="20">“ಒಬ್ಬನು ದಾಸನನ್ನಾಗಲಿ, ದಾಸಿಯನ್ನಾಗಲಿ ಸಾಯುವಂತೆ ಕೋಲಿನಿಂದ ಹೊಡೆದಾಗ, ಹೊಡೆದವನಿಗೆ ಖಂಡಿತವಾಗಿ ಶಿಕ್ಷೆಯಾಗಬೇಕು.</verse>
				<verse number="21">ದಾಸದಾಸಿಯರು ಒಂದೆರಡು ದಿನಗಳ ನಂತರ ಉಳಿದರೆ ಶಿಕ್ಷೆಯಾಗಬಾರದು. ಏಕೆಂದರೆ ಅವರು ಅವನ ಸೊತ್ತು.</verse>
				<verse number="22">“ಜನರು ಜಗಳವಾಡುವಾಗ ಗರ್ಭಿಣಿಯಾದ ಸ್ತ್ರೀಗೆ ಏಟು ತಗಲಿ ಗರ್ಭಸ್ರಾವವಾದರೆ, ಆ ಸ್ತ್ರೀಯ ಗಂಡನು ಕೇಳಿದಷ್ಟು ಮತ್ತು ನ್ಯಾಯಾಲಯವು ವಿಧಿಸುವಷ್ಟು ದಂಡವನ್ನು ಹೊಡೆದವನು ಕೊಡಬೇಕು.</verse>
				<verse number="23">ಬೇರೆ ಹಾನಿಯಾದ ಪಕ್ಷದಲ್ಲಿ ಪ್ರಾಣಕ್ಕೆ ಪ್ರಾಣವನ್ನು, ಕಣ್ಣಿಗೆ ಕಣ್ಣನ್ನು,</verse>
				<verse number="24">ಹಲ್ಲಿಗೆ ಹಲ್ಲು, ಕೈಗೆ ಕೈಯನ್ನು, ಕಾಲಿಗೆ ಕಾಲನ್ನು,</verse>
				<verse number="25">ಸುಟ್ಟ ಗಾಯಕ್ಕೆ ಸುಟ್ಟಗಾಯವನ್ನು, ಕಡಿದ ಗಾಯಕ್ಕೆ ಕಡಿದ ಗಾಯವನ್ನು, ಹೊಡೆದ ಗಾಯಕ್ಕೆ ಹೊಡೆದು ಗಾಯವನ್ನು ನೀನು ಮಾಡಬೇಕು.</verse>
				<verse number="26">“ಒಬ್ಬನು ದಾಸನ ಕಣ್ಣನ್ನು ಇಲ್ಲವೆ ದಾಸಿಯ ಕಣ್ಣನ್ನು ಹೊಡೆದು ನಷ್ಟಪಡಿಸಿದರೆ, ಆ ಕಣ್ಣಿಗೋಸ್ಕರ ಅವರನ್ನು ಅವನು ಬಿಡುಗಡೆ ಮಾಡಿ ಕಳುಹಿಸಲಿ.</verse>
				<verse number="27">ಒಬ್ಬನು ದಾಸನ ಹಲ್ಲನ್ನು, ಇಲ್ಲವೆ ದಾಸಿಯ ಹಲ್ಲನ್ನು ಉದುರಿಸಿದರೆ, ಹಲ್ಲಿಗೋಸ್ಕರ ಅವರನ್ನು ಬಿಡುಗಡೆ ಮಾಡಿ ಕಳುಹಿಸಲಿ.</verse>
				<verse number="28">“ಯಾವುದಾದರೂ ಒಂದು ಎತ್ತು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಹಾಯ್ದು ಕೊಂದರೆ, ಆ ಎತ್ತನ್ನು ಖಂಡಿತವಾಗಿ ಕಲ್ಲೆಸೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಬಾರದು. ಆ ಎತ್ತಿನ ಯಜಮಾನನು ನಿರಪರಾಧಿ.</verse>
				<verse number="29">ಆದರೆ ಆ ಎತ್ತು ಮೊದಲಿನಿಂದ ಹಾಯುವಂಥದ್ದೆಂದು ಯಜಮಾನನಿಗೆ ತಿಳಿದಿದ್ದರೂ ಅವನು ಅದನ್ನು ಕಟ್ಟಿಹಾಕದೆ ಇದ್ದುದರಿಂದ ಅದು ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಕೊಂದುಹಾಕಿದರೆ, ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು. ಆದರೆ ಯಜಮಾನನೂ ಮರಣದಂಡನೆಗೆ ಗುರಿಯಾಗುವನು.</verse>
				<verse number="30">ಒಂದು ವೇಳೆ ಅವನಿಗೆ ಪ್ರಾಯಶ್ಚಿತ್ತವನ್ನು ನೇಮಿಸಿದರೆ, ಅವನು ತನಗೆ ನೇಮಿಸಿದ್ದನ್ನೆಲ್ಲಾ ತನ್ನ ಪ್ರಾಣವಿಮೋಚನೆಗಾಗಿ ಕೊಡಲಿ.</verse>
				<verse number="31">ಅದು ಮಗನನ್ನು ಹಾಯ್ದಿದ್ದರೂ, ಮಗಳನ್ನು ಹಾಯ್ದಿದ್ದರೂ ಈ ನ್ಯಾಯತೀರ್ಪಿನ ಪ್ರಕಾರ ಅದರ ಯಜಮಾನನಿಗೆ ಮಾಡಬೇಕು.</verse>
				<verse number="32">ದಾಸನನ್ನಾದರೂ, ದಾಸಿಯನ್ನಾದರೂ ಎತ್ತು ಹಾಯ್ದರೆ, ದಾಸನ, ದಾಸಿಯ ಯಜಮಾನನಿಗೆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಡಬೇಕು ಮತ್ತು ಎತ್ತನ್ನು ಕಲ್ಲೆಸೆದು ಕೊಲ್ಲಬೇಕು.</verse>
				<verse number="33">“ಗುಂಡಿಯನ್ನು ಅಗೆದವನು ಅದನ್ನು ಮುಚ್ಚದೆ ಇದ್ದುದರಿಂದ ಎತ್ತಾದರೂ ಕತ್ತೆಯಾದರೂ ಆ ಗುಂಡಿಯಲ್ಲಿ ಬಿದ್ದು ಸತ್ತರೆ,</verse>
				<verse number="34">ಗುಂಡಿಯನ್ನು ಅಗೆದವನು ಈಡು ಕೊಡಬೇಕು. ಅವುಗಳ ಯಜಮಾನನಿಗೆ ಕ್ರಯ ನೀಡಬೇಕು. ಆದರೆ ಸತ್ತ ಪಶು ಅವನದಾಗಬೇಕು.</verse>
				<verse number="35">“ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ಹಾಯ್ದು ಕೊಂದರೆ, ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನೂ, ಸತ್ತ ಎತ್ತನ್ನೂ ಸರಿಯಾಗಿ ಇಬ್ಬರೂ ಪಾಲುಮಾಡಿಕೊಳ್ಳಬೇಕು.</verse>
				<verse number="36">ಇಲ್ಲವೆ ಆ ಎತ್ತು ಮೊದಲಿನಿಂದಲೂ ಹಾಯುವಂಥದ್ದೇ ಎಂದು ತಿಳಿದಿದ್ದರೂ, ಅದರ ಯಜಮಾನನು ಅದನ್ನು ಕಟ್ಟಿಹಾಕದೆ ಹೋಗಿದ್ದರೆ, ಎತ್ತಿಗೆ ಎತ್ತನ್ನು ಖಂಡಿತವಾಗಿ ಬದಲುಕೊಡಬೇಕು. ಆದರೆ ಸತ್ತ ಪಶುವನ್ನು ಅವನು ತೆಗೆದುಕೊಳ್ಳಬಹುದು.</verse>
			</chapter>
			<chapter number="22">
				<verse number="1">“ಒಬ್ಬನು ಎತ್ತನ್ನಾಗಲಿ, ಕುರಿಯನ್ನಾಗಲಿ ಕದ್ದು ಕೊಯ್ದರೆ, ಇಲ್ಲವೆ ಅದನ್ನು ಮಾರಿದರೆ, ಅವನು ಒಂದು ಎತ್ತಿಗೆ ಬದಲಾಗಿ ಐದು ಎತ್ತುಗಳನ್ನೂ, ಒಂದು ಕುರಿಗೆ ನಾಲ್ಕು ಕುರಿಗಳನ್ನೂ ಕೊಡಬೇಕು.</verse>
				<verse number="2">“ಒಬ್ಬ ಕಳ್ಳನು ಮನೆ ಮುರಿಯುವಾಗಲೇ ಕೈಗೆ ಸಿಕ್ಕಿದಾಗ ಅವನನ್ನು ಹೊಡೆದುಕೊಂದರೆ, ಹೊಡೆದವನ ರಕ್ತ ಸುರಿಸಬಾರದು.</verse>
				<verse number="3">ಅವನು ಕಳ್ಳತನ ಮಾಡುವಾಗ ಸೂರ್ಯೋದಯವಾದರೆ, ಹೊಡೆದವನ ರಕ್ತ ಸುರಿಸಬೇಕು. “ಕಳ್ಳನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಹಿಂದಿರುಗಿಸಬೇಕು. ಅವನಲ್ಲಿ ಕೊಡಲು ಇಲ್ಲದ ಪಕ್ಷಕ್ಕೆ ಅವನ ಕಳ್ಳತನಕ್ಕಾಗಿ ಅವನನ್ನು ಗುಲಾಮನನ್ನಾಗಿ ಮಾರಬೇಕು.</verse>
				<verse number="4">ಕಳ್ಳತನ ಮಾಡಿದ ಎತ್ತಾಗಲಿ, ಕತ್ತೆಯಾಗಲಿ, ಕುರಿಯಾಗಲಿ ಕದ್ದವನ ಬಳಿಯಲ್ಲಿ ಜೀವವುಳ್ಳದ್ದಾಗಿ ಸಿಕ್ಕಿದರೆ ಅವನು ಎರಡರಷ್ಟು ಈಡು ಕೊಡಬೇಕು.</verse>
				<verse number="5">“ಒಬ್ಬನು ಇನ್ನೊಬ್ಬನ ಹೊಲದಲ್ಲಿ ತನ್ನ ಪಶುಗಳನ್ನು ಬಿಟ್ಟು ಬೆಳೆಯನ್ನೂ, ದ್ರಾಕ್ಷಿ ತೋಟವನ್ನೂ ಮೇಯಿಸಿದರೆ, ಅವನು ತನ್ನ ಸ್ವಂತ ಹೊಲದ ಉತ್ತಮ ಭಾಗವನ್ನೂ, ದ್ರಾಕ್ಷಿ ತೋಟದಲ್ಲಿನ ಉತ್ತಮವಾದದ್ದನ್ನೂ ಈಡು ಕೊಡಬೇಕು.</verse>
				<verse number="6">“ಬೆಂಕಿಹತ್ತಿ ಅದು ಮುಳ್ಳಿನ ಕೊಂಪೆಗೆ ತಗುಲಿ, ಸಿವುಡುಗಳ ಬಣವೆಗಳನ್ನಾಗಲಿ, ನಿಂತ ಬೆಳೆಯನ್ನಾಗಲಿ, ಹೊಲವನ್ನಾಗಲಿ ಸುಟ್ಟುಬಿಟ್ಟರೆ, ಆ ಬೆಂಕಿಯನ್ನು ಹಚ್ಚಿದವನು ಖಂಡಿತವಾಗಿ ಈಡು ಕೊಡಬೇಕು.</verse>
				<verse number="7">“ಒಬ್ಬನು ತನ್ನ ನೆರೆಯವನಿಗೆ ತನ್ನ ಹಣವನ್ನಾಗಲಿ, ವಸ್ತುಗಳನ್ನಾಗಲಿ ಇಟ್ಟುಕೊಳ್ಳುವುದಕ್ಕೆ ಕೊಟ್ಟಾಗ, ಅದು ಅವನ ಮನೆಯಿಂದ ಕಳ್ಳತನವಾದರೆ, ಕಳ್ಳತನ ಮಾಡಿದವನು ಸಿಕ್ಕಿದರೆ, ಅವನು ಎರಡರಷ್ಟು ಕೊಡಬೇಕು.</verse>
				<verse number="8">ಕಳ್ಳನು ಸಿಕ್ಕದೆ ಹೋದರೆ ಮನೆಯ ಯಜಮಾನನು ತನ್ನ ನೆರೆಯವನ ವಸ್ತುಗಳನ್ನು ಅವನು ಮುಟ್ಟಲಿಲ್ಲವೆಂದು ವಿಚಾರಿಸುವುದಕ್ಕೆ ದೇವರ ಸನ್ನಿಧಿಯಲ್ಲಿ ಅವನನ್ನು ಹಾಜರುಪಡಿಸಬೇಕು.</verse>
				<verse number="9">ಎತ್ತು, ಕತ್ತೆ, ಕುರಿ ವಸ್ತ್ರಗಳ ವಿಷಯವಾದ ಎಲ್ಲಾ ಅಪರಾಧಗಳಿಗೋಸ್ಕರ ಇಲ್ಲವೆ ಕಳೆದುಹೋದ ಯಾವ ತರದ ವಸ್ತುಗಳ ವಿಷಯದಲ್ಲಿ ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು, ‘ಇದು ತನ್ನದೆಂದು,’ ಹೇಳಿದ ಪಕ್ಷಕ್ಕೆ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ನ್ಯಾಯಾಧಿಪತಿಗಳು ಯಾರನ್ನು ಅಪರಾಧಿಯೆಂದು ನಿರ್ಣಯಿಸುವರೋ, ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.</verse>
				<verse number="10">“ಒಬ್ಬನು ತನ್ನ ನೆರೆಯವನಿಗೆ ಕತ್ತೆಯನ್ನಾದರೂ ಎತ್ತನ್ನಾದರೂ ಕುರಿಯನ್ನಾದರೂ ಬೇರೆ ಯಾವ ಪಶುವನ್ನಾದರೂ ಕಾಯುವುದಕ್ಕೆ ಕೊಟ್ಟಾಗ, ಅದು ಸತ್ತರೆ, ಇಲ್ಲವೆ ಊನವಾದರೆ, ಇಲ್ಲವೆ ಯಾರೂ ತಿಳಿಯದಂತೆ ಸುಲಿಗೆಯಾದರೆ,</verse>
				<verse number="11">ತಾನು ತನ್ನ ನೆರೆಯವನ ವಸ್ತುವನ್ನು ತೆಗೆದುಕೊಳ್ಳಲಿಲ್ಲವೆಂದು ಅವರಿಬ್ಬರ ಮಧ್ಯದಲ್ಲಿ ಯೆಹೋವ ದೇವರ ಮುಂದೆ ಪ್ರಮಾಣಮಾಡಬೇಕು. ಅದನ್ನು ಪಶುವಿನ ಯಜಮಾನನು ಒಪ್ಪಿದರೆ ಅವನು ಈಡುಕೊಡಬಾರದು.</verse>
				<verse number="12">ಆದರೆ ಅದು ಅವನ ಬಳಿಯಿಂದ ಕಳ್ಳತನವಾಗಿ ಹೋಗಿದ್ದರೆ, ಯಜಮಾನನಿಗೆ ಈಡು ಕೊಡಬೇಕು.</verse>
				<verse number="13">ಕಾಡುಮೃಗವು ಅದನ್ನು ಕೊಂದಿದ್ದರೆ, ಅದರ ಹೆಣವನ್ನು ಸಾಕ್ಷಿಗಾಗಿ ತರಲಿ. ಕಾಡುಮೃಗ ಕೊಂದಿದ್ದಕ್ಕೆ ಈಡುಕೊಡಬೇಕಾದ ಅವಶ್ಯಕತೆ ಇಲ್ಲ.</verse>
				<verse number="14">“ಒಬ್ಬನು ತನ್ನ ನೆರೆಯವನಿಂದ ಪಶುವನ್ನು ಎರವಲಾಗಿ ತೆಗೆದುಕೊಂಡಿರಲಾಗಿ ಅದರ ಒಡೆಯನು ಅದರ ಹತ್ತಿರ ಇಲ್ಲದಿರುವಾಗ, ಆ ಪಶುವಿಗೆ ಊನವಾದರೆ, ಇಲ್ಲವೆ ಅದು ಸತ್ತರೆ ಅದಕ್ಕೆ ಅವನು ಖಂಡಿತವಾಗಿ ಈಡು ಕೊಡಬೇಕು.</verse>
				<verse number="15">ಆದರೆ ಅದರ ಯಜಮಾನನು ಅದರ ಸಂಗಡ ಇದ್ದರೆ ಈಡು ಕೊಡದೆಯಿರಲಿ. ಅದು ಬಾಡಿಗೆಗೆ ತಂದಿದ್ದರೆ ಅದರ ಬಾಡಿಗೆಯಲ್ಲಿಯೇ ಎಣಿಕೆಯಾಗಲಿ.</verse>
				<verse number="16">“ಒಬ್ಬನು ಕನ್ನಿಕೆಯನ್ನು ಮೋಸಗೊಳಿಸಿ, ಅವಳ ಸಂಗಡ ಮಲಗಿದರೆ ಅವಳು ತನ್ನ ಹೆಂಡತಿಯಾಗುವಂತೆ ಆಕೆಗೆ ಖಂಡಿತವಾಗಿ ತೆರವನ್ನು ಕೊಡಬೇಕು.</verse>
				<verse number="17">ಆಕೆಯ ತಂದೆಗೆ ಆಕೆಯನ್ನು ಕೊಡುವುದಕ್ಕೆ ಮನಸ್ಸಿಲ್ಲದಿದ್ದರೆ, ಅವನಿಗೆ ಕನ್ನಿಕೆಯ ತೆರವಿನ ಪ್ರಕಾರ ಹಣ ಸಲ್ಲಿಸಬೇಕು.</verse>
				<verse number="18">“ಮಾಟಗಾರ್ತಿಯನ್ನು ಬದುಕಲು ಬಿಡಬಾರದು.</verse>
				<verse number="19">“ಪಶುವಿನ ಸಂಗಡ ಸಂಗಮಿಸುವ ಯಾರಾದರೂ ಸರಿ, ಅಂಥವನಿಗೆ ಮರಣದಂಡನೆಯಾಗಬೇಕು.</verse>
				<verse number="20">“ಯೆಹೋವ ದೇವರು ಹೊರತಾಗಿ ಮತ್ತೊಬ್ಬ ದೇವರಿಗೆ ಯಜ್ಞ ಅರ್ಪಿಸುವವನು ಸಂಪೂರ್ಣವಾಗಿ ನಾಶವಾಗಬೇಕು.</verse>
				<verse number="21">“ಪರದೇಶಸ್ಥನನ್ನು ಉಪದ್ರವ ಪಡಿಸಬೇಡಿರಿ ಮತ್ತು ಬಾಧಿಸಲೂ ಬೇಡಿರಿ. ಏಕೆಂದರೆ ನೀವು ಈಜಿಪ್ಟ್ ದೇಶದಲ್ಲಿ ಪರದೇಶಿಗಳಾಗಿದ್ದೀರಿ.</verse>
				<verse number="22">“ಯಾವ ವಿಧವೆಯನ್ನು, ದಿಕ್ಕಿಲ್ಲದ ಮಗುವನ್ನು ಬಾಧಿಸಬೇಡಿರಿ.</verse>
				<verse number="23">ನೀವು ಯಾವ ರೀತಿಯಲ್ಲಿ ಅವರನ್ನು ಬಾಧಿಸಿದರೂ ಅವರು ಕೂಗಿದರೆ ನಾನು ನಿಶ್ಚಯವಾಗಿ ಅವರ ಕೂಗನ್ನು ಕೇಳುವೆನು.</verse>
				<verse number="24">ಆಗ ನನ್ನ ಕೋಪವು ಉರಿಯುವುದು. ಖಡ್ಗದಿಂದ ನಿಮ್ಮನ್ನು ಕೊಲ್ಲುವೆನು. ನಿಮ್ಮ ಹೆಂಡತಿಯರು ವಿಧವೆಯರಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.</verse>
				<verse number="25">“ನಿಮ್ಮ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ, ಅವನಿಂದ ಬಡ್ಡಿ ತೆಗೆದುಕೊಳ್ಳಬಾರದು.</verse>
				<verse number="26">ಇಲ್ಲವೆ ಅವನ ಮೇಲೆ ಬಡ್ಡಿ ಹೊರಿಸಬೇಡ. ನಿಮ್ಮ ನೆರೆಯವನ ಮೇಲಂಗಿಯನ್ನು ಅಡವು ಇಟ್ಟುಕೊಂಡಿದ್ದರೆ, ಸೂರ್ಯನು ಮುಳುಗುವುದರೊಳಗಾಗಿ ಅವನಿಗೆ ಹಿಂದಕ್ಕೆ ಕೊಡಬೇಕು.</verse>
				<verse number="27">ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಯಾವುದನ್ನು ಹೊದ್ದುಕೊಂಡು ಮಲಗಿಯಾನು? ಅವನು ನನಗೆ ಮೊರೆಯಿಟ್ಟರೆ ನಾನು ಕೇಳುವೆನು. ಏಕೆಂದರೆ ನಾನು ಅನುಕಂಪ ಉಳ್ಳವನು.</verse>
				<verse number="28">“ದೇವರನ್ನು ದೂಷಿಸಬೇಡ, ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.</verse>
				<verse number="29">“ನಿನ್ನ ಧಾನ್ಯಗಳನ್ನೂ ಪಾನಗಳನ್ನೂ ನನಗೆ ಅರ್ಪಿಸುವುದಕ್ಕೆ ತಡಮಾಡಬೇಡ. “ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಮೀಸಲಾಗಿಡಬೇಕು.</verse>
				<verse number="30">ಅದರಂತೆಯೇ ನಿಮ್ಮ ದನಕುರಿಗಳನ್ನೂ ನನಗೆ ಸಮರ್ಪಿಸಬೇಕು. ಅದು ಏಳು ದಿನಗಳು ತಾಯಿಯ ಬಳಿಯಲ್ಲಿರಲಿ, ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.</verse>
				<verse number="31">“ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದ್ದರಿಂದ ಹೊಲದಲ್ಲಿ ಕಾಡುಮೃಗ ಕೊಂದದ್ದನ್ನು ನೀವು ತಿನ್ನಬಾರದು, ಅದನ್ನು ನಾಯಿಗಳಿಗೆ ಹಾಕಬೇಕು.</verse>
			</chapter>
			<chapter number="23">
				<verse number="1">“ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುರುದ್ದೇಶಪೂರಿತ ಸಾಕ್ಷಿಯಾಗುವ ಮೂಲಕ ದುಷ್ಟರಿಗೆ ಸಹಾಯಮಾಡಬೇಡ.</verse>
				<verse number="2">“ಕೆಟ್ಟದ್ದನ್ನು ಮಾಡುವವರು ಬಹುಮಂದಿ ಆದರೂ ನೀವು ಅವರನ್ನು ಹಿಂಬಾಲಿಸಬೇಡ. ಬಹುಮಂದಿಯೊಂದಿಗೆ ನ್ಯಾಯಕ್ಕೆ ವಿರುದ್ಧವಾಗಿ ವ್ಯಾಜ್ಯದಲ್ಲಿ ಸಾಕ್ಷಿಕೊಡಬೇಡ.</verse>
				<verse number="3">ಬಡವನಿಗೂ ವ್ಯಾಜ್ಯದಲ್ಲಿ ಮುಖದಾಕ್ಷಿಣ್ಯ ಮಾಡಬೇಡ.</verse>
				<verse number="4">“ನೀವು ವೈರಿಯ ಎತ್ತಾಗಲಿ, ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ, ಅದು ನಿಮಗೆ ಸಿಕ್ಕಿದರೆ ನೀವು ಅದನ್ನು ಖಂಡಿತವಾಗಿ ತಿರುಗಿ ಅವನಿಗೆ ತಂದುಕೊಡಬೇಕು.</verse>
				<verse number="5">ನಿಮ್ಮನ್ನು ಹಗೆ ಮಾಡುವವನ ಕತ್ತೆಯು ತನ್ನ ಹೊರೆಯ ಕೆಳಗೆ ಬಿದ್ದಿರುವುದನ್ನು ನೀವು ಕಂಡಾಗ, ಅವನಿಗೆ ಸಹಾಯ ಮಾಡುವುದಕ್ಕೆ ಮನಸ್ಸಿಲ್ಲದಿದ್ದರೂ ನೀವು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು.</verse>
				<verse number="6">“ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ತಪ್ಪಿಸಿ ತೀರ್ಪುಕೊಡಬಾರದು.</verse>
				<verse number="7">ಸುಳ್ಳಿನ ವಿಷಯಗಳಿಂದ ನೀವು ದೂರವಿರಬೇಕು. ನಿರಪರಾಧಿ, ನೀತಿವಂತ ಆದ ವ್ಯಕ್ತಿಗೆ ಮರಣದಂಡನೆ ವಿಧಿಸಬಾರದು. ಅಂಥ ದುಷ್ಕೃತ್ಯ ಮಾಡಿದವನಿಗೆ ನಾನು ಶಿಕ್ಷೆ ವಿಧಿಸದೆ ಬಿಡುವುದಿಲ್ಲ.</verse>
				<verse number="8">“ಲಂಚವನ್ನು ತೆಗೆದುಕೊಳ್ಳಬಾರದು. ಏಕೆಂದರೆ ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.</verse>
				<verse number="9">“ಪರದೇಶಿಯರನ್ನು ಪೀಡಿಸಬಾರದು. ಏಕೆಂದರೆ ಈಜಿಪ್ಟ್ ದೇಶದಲ್ಲಿ ನೀವೂ ಪರದೇಶಿಗಳಾದ್ದಿರಷ್ಟೇ, ಅಂಥವರ ಮನೋವ್ಯಥೆಯನ್ನು ನಿಮಗೆ ತಿಳಿದಿದೆ.</verse>
				<verse number="10">“ಆರು ವರ್ಷ ನಿಮ್ಮ ಭೂಮಿಗೆ ಬೀಜ ಹಾಕಿ, ಅದರ ಬೆಳೆಯನ್ನು ಕೂಡಿಸಬೇಕು.</verse>
				<verse number="11">ಆದರೆ ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು, ಅದನ್ನು ಬೀಳುಬಿಡಬೇಕು. ಆಗ ನಿಮ್ಮ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ. ಅವರು ಬಿಟ್ಟದ್ದನ್ನು ಕಾಡುಮೃಗಗಳು ತಿನ್ನಲಿ. ನಿಮ್ಮ ದ್ರಾಕ್ಷಿತೋಟದ, ಓಲಿವ್ ಮರಗಳ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು.</verse>
				<verse number="12">“ಆರು ದಿವಸ ನೀವು ನಿಮ್ಮ ಕೆಲಸಗಳನ್ನು ಮಾಡಬೇಕು. ಏಳನೆಯ ದಿನದಲ್ಲಿ ನೀವು, ನಿಮ್ಮ ಎತ್ತು ಮತ್ತು ನಿಮ್ಮ ಕತ್ತೆ ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿಮ್ಮ ಮನೆಯಲ್ಲಿ ಜನಿಸಿದ ದಾಸದಾಸಿಯರೂ ಪರದೇಶಸ್ಥರೂ ದಣಿವು ಆರಿಸಿಕೊಳ್ಳಲಿ.</verse>
				<verse number="13">“ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಗೊಳ್ಳಬೇಕು. ಬೇರೆ ದೇವರುಗಳ ಹೆಸರನ್ನು ಎತ್ತಬೇಡ. ಅದನ್ನು ಉಚ್ಚರಿಸಲೂ ಬೇಡ.</verse>
				<verse number="14">“ವರ್ಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡಬೇಕು.</verse>
				<verse number="15">“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ಅಬೀಬ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳವರೆಗೆ ನಾನು ನಿಮಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಆ ತಿಂಗಳಲ್ಲೇ ಈಜಿಪ್ಟಿನಿಂದ ಹೊರಗೆ ಬಂದಿದ್ದೀರಿ. “ಒಬ್ಬರೂ ಕಾಣಿಕೆಯಿಲ್ಲದೆ ಬರಿಗೈಯಿಂದ ನನ್ನ ಸನ್ನಿಧಿಗೆ ಬರಬಾರದು.</verse>
				<verse number="16">“ನೀವು ಬಿತ್ತಿದ ಹೊಲದಲ್ಲಿ ಪ್ರಥಮ ಫಲವು ದೊರೆತಾಗ ಸುಗ್ಗಿ ಹಬ್ಬವನ್ನು ಆಚರಿಸಬೇಕು. “ಹೊಲತೋಟಗಳ ಬೆಳೆಯನ್ನು ಕೂಡಿಸುವಾಗ ಅಂದರೆ, ವರ್ಷದ ಕೊನೆಯಲ್ಲಿ ಫಲಸಂಗ್ರಹದ ಹಬ್ಬವನ್ನು ಆಚರಿಸಬೇಕು.</verse>
				<verse number="17">“ವರ್ಷಕ್ಕೆ ಮೂರು ಸಾರಿ ನಿಮ್ಮಲ್ಲಿರುವ ಪುರುಷರೆಲ್ಲಾ ಸಾರ್ವಭೌಮ ಯೆಹೋವ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.</verse>
				<verse number="18">“ಬಲಿ ಅರ್ಪಣೆಯ ರಕ್ತವನ್ನು ಹುಳಿಯಿರುವ ರೊಟ್ಟಿಯ ಸಂಗಡ ಅರ್ಪಿಸಬಾರದು. “ಯಾವುದೇ ಹಬ್ಬದ ಅರ್ಪಣೆಯಲ್ಲಿ ಕೊಬ್ಬನ್ನು ಬೆಳಗಿನವರೆಗೆ ಇಟ್ಟುಕೊಳ್ಳಬಾರದು.</verse>
				<verse number="19">“ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಅತ್ಯುತ್ತಮವಾದದ್ದನ್ನು ನಿಮ್ಮ ಯೆಹೋವ ದೇವರ ಆಲಯಕ್ಕೆ ತರಬೇಕು. “ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.</verse>
				<verse number="20">“ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವುದಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ತರುವುದಕ್ಕೋಸ್ಕರವೂ ನಾನು ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ.</verse>
				<verse number="21">ಅವನ ವಿಷಯದಲ್ಲಿ ಜಾಗ್ರತೆಯಾಗಿದ್ದು, ಅವನ ಮಾತಿಗೆ ವಿಧೇಯರಾಗಿರಿ. ಅವನಿಗೆ ಕೋಪವನ್ನೆಬ್ಬಿಸಬೇಡಿರಿ. ಏಕೆಂದರೆ ನನ್ನ ಹೆಸರು ಅವನಲ್ಲಿ ಇರುವುದರಿಂದ ಅವನು ನಿಮ್ಮ ದ್ರೋಹಗಳನ್ನು ಮನ್ನಿಸುವುದಿಲ್ಲ.</verse>
				<verse number="22">ಅವನ ಮಾತಿಗೆ ನೀವು ನಿಜವಾಗಿಯೂ ವಿಧೇಯರಾಗಿ ನಾನು ಹೇಳಿದ್ದನ್ನೆಲ್ಲಾ ನೀವು ಮಾಡಿದರೆ, ನಿಮ್ಮ ಶತ್ರುಗಳಿಗೆ ನಾನು ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ನಾನು ವಿರೋಧಿಯಾಗಿಯೂ ಇರುವೆನು.</verse>
				<verse number="23">ಏಕೆಂದರೆ ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಮತ್ತು ಯೆಬೂಸಿಯರು ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.</verse>
				<verse number="24">ಅವರ ದೇವರುಗಳಿಗೆ ನೀವು ಅಡ್ಡಬೀಳಲೂಬಾರದು, ಅವುಗಳನ್ನು ಆರಾಧಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ, ಅವರನ್ನು ನಿರ್ಮೂಲ ಮಾಡಿಬಿಟ್ಟು, ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದುಹಾಕಬೇಕು.</verse>
				<verse number="25">ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಆರಾಧನೆ ಮಾಡಬೇಕು. ಆಗ ಆತನು ನಿಮ್ಮ ಆಹಾರವನ್ನೂ ನೀರನ್ನೂ ಆಶೀರ್ವದಿಸುವನು. ನಾನು ವ್ಯಾಧಿಯನ್ನು ನಿಮ್ಮ ಮಧ್ಯದಿಂದ ತೊಲಗಿಸಿಬಿಡುವೆನು.</verse>
				<verse number="26">ಗರ್ಭ ಸ್ರಾವವಾಗಲಿ, ಬಂಜೆತನವಾಗಲಿ ನಿಮ್ಮ ದೇಶದಲ್ಲಿ ಇರುವುದಿಲ್ಲ. ನಾನು ನಿಮಗೆ ಸಂಪೂರ್ಣವಾದ ಆಯುಷ್ಯವನ್ನು ಅನುಗ್ರಹಿಸುವೆನು.</verse>
				<verse number="27">“ನೀವು ಹೋಗುವ ಎಲ್ಲ ಜಾಗಗಳಲ್ಲಿಯೂ ನನ್ನ ಮೇಲಿನ ಭೀತಿಯನ್ನು ನಿಮ್ಮನ್ನು ಎದುರಿಸುವ ಜನರಲ್ಲಿ ಉಂಟುಮಾಡಿಸಿ, ಕಳವಳವನ್ನು ಉಂಟುಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿಸುವಂತೆ ಮಾಡುವೆನು.</verse>
				<verse number="28">ಹಿವ್ವಿಯರು, ಕಾನಾನ್ಯರು ಮತ್ತು ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳಹಿಸುವೆನು.</verse>
				<verse number="29">ಭೂಮಿಯು ಬರಿದಾಗದಂತೆಯೂ ಕಾಡುಮೃಗಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರ್ಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ</verse>
				<verse number="30">ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿಸಿಕೊಳ್ಳುವವರೆಗೆ ಸ್ವಲ್ಪ ಸ್ವಲ್ಪವಾಗಿ ಹೊರಡಿಸುತ್ತಿರುವೆನು.</verse>
				<verse number="31">“ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದವರೆಗೆ ಮರುಭೂಮಿಯಿಂದ ನದಿಯವರೆಗೂ ನಿಮ್ಮ ಮೇರೆಗಳನ್ನು ನೇಮಿಸುವೆನು. ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವಿರಿ.</verse>
				<verse number="32">ಅವರ ಸಂಗಡ, ಅವರ ದೇವರುಗಳ ಸಂಗಡ ಯಾವ ಒಡಂಬಡಿಕೆಯನ್ನು ಮಾಡಿಕೊಳ್ಳಬಾರದು.</verse>
				<verse number="33">ನನಗೆ ವಿರೋಧವಾಗಿ ನೀವು ಪಾಪಮಾಡದಂತಾಗಬೇಕಾದರೆ, ಅವರು ನಿಮ್ಮ ದೇಶದಲ್ಲಿ ವಾಸವಾಗಿರಬಾರದು. ಏಕೆಂದರೆ ನೀವು ಅವರ ದೇವರುಗಳನ್ನು ಆರಾಧಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವುದು.”</verse>
			</chapter>
			<chapter number="24">
				<verse number="1">ತರುವಾಯ ಯೆಹೋವ ದೇವರು ಮೋಶೆಗೆ, “ನೀನು, ಆರೋನ್, ನಾದಾಬ್, ಅಬೀಹೂ ಮತ್ತು ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಈ ಬೆಟ್ಟವನ್ನು ಹತ್ತಿ ಯೆಹೋವ ದೇವರಾದ ನನ್ನ ಬಳಿಗೆ ಬಂದು ದೂರದಲ್ಲಿ ಆರಾಧಿಸಿರಿ.</verse>
				<verse number="2">ಮೋಶೆ ಒಬ್ಬನೇ ಯೆಹೋವ ದೇವರ ಸಮೀಪಕ್ಕೆ ಬರಲಿ. ಬೇರೆ ಯಾರೂ ಸಮೀಪಕ್ಕೆ ಬರಬಾರದು. ಜನರೂ ಅವನ ಸಂಗಡ ಮೇಲೇರಿ ಬರಬಾರದು,” ಎಂದು ಹೇಳಿದರು.</verse>
				<verse number="3">ಮೋಶೆಯು ಬಂದು ಯೆಹೋವ ದೇವರ ಎಲ್ಲಾ ಮಾತುಗಳನ್ನೂ ಎಲ್ಲಾ ನ್ಯಾಯವಿಧಿಗಳನ್ನು ಜನರಿಗೆ ತಿಳಿಸಿದನು. ಆಗ ಜನರೆಲ್ಲಾ ಒಂದೇ ಸ್ವರದಿಂದ, “ಯೆಹೋವ ದೇವರು ಹೇಳಿದ ಎಲ್ಲಾ ಮಾತುಗಳ ಪ್ರಕಾರ ಮಾಡುತ್ತೇವೆ,” ಎಂದು ಉತ್ತರಕೊಟ್ಟರು.</verse>
				<verse number="4">ಮೋಶೆಯು ಯೆಹೋವ ದೇವರು ಪ್ರಕಟಪಡಿಸಿದ ಮಾತುಗಳನ್ನೆಲ್ಲಾ ಬರೆದಿಟ್ಟನು. ಅವನು ಮರುದಿನ ಬೆಳಿಗ್ಗೆ ಎದ್ದು ಬೆಟ್ಟದ ಕೆಳಗೆ ಬಲಿಪೀಠವನ್ನು ಕಟ್ಟಿಸಿ, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗನುಸಾರವಾಗಿ ಹನ್ನೆರಡು ಸ್ತಂಭಗಳನ್ನು ನಿಲ್ಲಿಸಿದನು.</verse>
				<verse number="5">ಅವನು ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನದ ಬಲಿಗಾಗಿ ಹೋರಿಗಳನ್ನೂ ಅರ್ಪಿಸುವುದಕ್ಕಾಗಿ ಇಸ್ರಾಯೇಲರ ಯೌವನಸ್ಥರನ್ನು ಕಳುಹಿಸಲು ಅವರು ಅದನ್ನು ಅರ್ಪಿಸಿದರು.</verse>
				<verse number="6">ಮೋಶೆಯು ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬೋಗುಣಿಗಳಲ್ಲಿ ಹಾಕಿದನು ಮತ್ತು ರಕ್ತದಲ್ಲಿ ಮಿಕ್ಕ ಅರ್ಧವನ್ನು ಬಲಿಪೀಠದ ಮೇಲೆ ಚಿಮುಕಿಸಿದನು.</verse>
				<verse number="7">ಒಡಂಬಡಿಕೆಯ ಗ್ರಂಥವನ್ನು ತೆಗೆದುಕೊಂಡು ಜನರ ಸಭೆಯಲ್ಲಿ ಓದಿದನು. ಆಗ ಅವರು, “ಯೆಹೋವ ದೇವರ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ಅವುಗಳಿಗೆ ವಿಧೇಯರಾಗುವೆವು,” ಎಂದರು.</verse>
				<verse number="8">ತರುವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಈ ಎಲ್ಲಾ ಮಾತುಗಳ ವಿಷಯದಲ್ಲಿ ಯೆಹೋವ ದೇವರು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತ,” ಎಂದನು.</verse>
				<verse number="9">ಆಗ ಮೋಶೆ, ಆರೋನ್, ನಾದಾಬ್, ಅಬೀಹೂ ಮತ್ತು ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಮೇಲಕ್ಕೆ ಹೋದರು.</verse>
				<verse number="10">ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲ ವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ, ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.</verse>
				<verse number="11">ಆದರೆ ದೇವರು ಇಸ್ರಾಯೇಲರ ಶ್ರೇಷ್ಠರನ್ನು ತಳ್ಳಿಬಿಡಲಿಲ್ಲ. ಅವರು ಸಹ ದೇವರನ್ನು ನೋಡಿ, ಊಟಮಾಡಿ, ಪಾನಮಾಡಿದರು.</verse>
				<verse number="12">ಯೆಹೋವ ದೇವರು ಮೋಶೆಗೆ, “ಬೆಟ್ಟವನ್ನೇರಿ, ನನ್ನ ಬಳಿಗೆ ಬಂದು ಇಲ್ಲೇ ಇರು. ನಿಯಮವನ್ನು ಹಾಗು ಆಜ್ಞೆಗಳನ್ನು ನೀನು ಜನರಿಗೆ ಬೋಧನೆಮಾಡುವಂತೆ ಬರೆದಿರುವ ಕಲ್ಲಿನ ಹಲಗೆಗಳನ್ನು ನಾನು ನಿನಗೆ ಕೊಡುತ್ತೇನೆ,” ಎಂದು ಹೇಳಿದರು.</verse>
				<verse number="13">ಆಗ ಮೋಶೆಯೂ ಅವನ ಸಹಾಯಕನಾದ ಯೆಹೋಶುವನೂ ದೇವರ ಬೆಟ್ಟದ ಮೇಲೆ ಹೊರಟರು.</verse>
				<verse number="14">ಆಗ ಮೋಶೆ ಹಿರಿಯರಿಗೆ, “ನಾವು ನಿಮ್ಮ ಬಳಿಗೆ ತಿರುಗಿ ಬರುವವರೆಗೆ ಇಲ್ಲಿ ನಮಗಾಗಿ ಕಾದುಕೊಂಡಿರಿ. ಆರೋನನೂ ಹೂರನೂ ನಿಮ್ಮ ಸಂಗಡ ಇರುತ್ತಾರೆ. ಯಾರಿಗಾದರೂ ವ್ಯಾಜ್ಯವಿದ್ದರೆ ಅವರ ಬಳಿಗೆ ಹೋಗಲಿ,” ಎಂದನು.</verse>
				<verse number="15">ಮೋಶೆ ಬೆಟ್ಟವನ್ನೇರಿ ಹೋದಾಗ ಮೇಘವು ಬೆಟ್ಟವನ್ನು ಮುಚ್ಚಿಕೊಂಡಿತು.</verse>
				<verse number="16">ಇದಲ್ಲದೆ ಯೆಹೋವ ದೇವರ ಮಹಿಮೆಯು ಸೀನಾಯಿ ಬೆಟ್ಟದ ಮೇಲೆ ನೆಲೆಯಾಗಿದ್ದುದರಿಂದ ಮೇಘವು ಅದನ್ನು ಆರು ದಿನಗಳವರೆಗೆ ಮುಚ್ಚಿಕೊಂಡಿತು. ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದರು.</verse>
				<verse number="17">ಯೆಹೋವ ದೇವರ ಮಹಿಮೆಯ ದೃಶ್ಯವು ಇಸ್ರಾಯೇಲರ ಕಣ್ಣುಗಳ ಮುಂದೆ ಬೆಟ್ಟದ ತುದಿಯಲ್ಲಿ ದಹಿಸುವ ಅಗ್ನಿಯಂತಿತ್ತು.</verse>
				<verse number="18">ಆಗ ಮೋಶೆಯು ಮೇಘದ ಮಧ್ಯಕ್ಕೆ ಬಂದು ಬೆಟ್ಟವನ್ನೇರಿದನು. ಅವನು ಹಗಲಿರುಳು ನಲವತ್ತು ದಿವಸ ಪರ್ವತದ ಮೇಲಿದ್ದನು.</verse>
			</chapter>
			<chapter number="25">
				<verse number="1">ಯೆಹೋವ ದೇವರು ಮೋಶೆಗೆ,</verse>
				<verse number="2">“ನನಗೆ ಕಾಣಿಕೆಗಳನ್ನು ತೆಗೆದುಕೊಂಡು ಬರುವಂತೆ ಇಸ್ರಾಯೇಲರ ಸಂಗಡ ಮಾತನಾಡು. ಯಾರ ಹೃದಯದಲ್ಲಿ ಕಾಣಿಕೆ ಕೊಡಬೇಕೆಂಬ ಪ್ರೇರಣೆ ಹುಟ್ಟುತ್ತದೋ, ಅಂಥವರ ಕಾಣಿಕೆಯನ್ನು ನೀನು ತೆಗೆದುಕೊಳ್ಳಬೇಕು.</verse>
				<verse number="3">“ನೀನು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು: “ಚಿನ್ನ, ಬೆಳ್ಳಿ, ಕಂಚು,</verse>
				<verse number="4">ನೀಲಿ, ಧೂಮ್ರ, ರಕ್ತವರ್ಣದಾರಗಳು, ನಾರುಬಟ್ಟೆಗಳು, ಮೇಕೆಯ ಕೂದಲು,</verse>
				<verse number="5">ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು, ಕಡಲುಹಂದಿಯ ಚರ್ಮಗಳು, ಜಾಲಿ ಮರದ ಕಟ್ಟಿಗೆ.</verse>
				<verse number="6">ದೀಪಕ್ಕಾಗಿ ಓಲಿವ್ ಎಣ್ಣೆ ಮತ್ತು ಅಭಿಷೇಕಿಸುವ ಎಣ್ಣೆಗೋಸ್ಕರ ಪರಿಮಳ ಧೂಪಕ್ಕೋಸ್ಕರ ಸುಗಂಧ ದ್ರವ್ಯಗಳು,</verse>
				<verse number="7">ಏಫೋದ್ ಕವಚಕ್ಕಾಗಿ ಗೋಮೇಧಿಕಗಳು ಮತ್ತು ಎದೆಪದಕದಲ್ಲಿ ಹಚ್ಚಬೇಕಾದ ನಾನಾ ರತ್ನಗಳು ಇವೆ.</verse>
				<verse number="8">“ನಾನು ಅವರ ಮಧ್ಯದಲ್ಲಿ ವಾಸಿಸುವ ಹಾಗೆ ಅವರು ನನಗೆ ಒಂದು ಪರಿಶುದ್ಧ ಆಲಯವನ್ನು ಕಟ್ಟಬೇಕು.</verse>
				<verse number="9">ಗುಡಾರದ ಮಾದರಿಯನ್ನೂ, ಅದರ ಎಲ್ಲಾ ಸಲಕರಣೆಗಳ ಮಾದರಿಯನ್ನೂ ನಾನು ನಿನಗೆ ತೋರಿಸುವಂತೆಯೇ ನೀನು ಮಾಡಬೇಕು.</verse>
				<verse number="10">“ಜಾಲಿ ಮರದಿಂದ ಸುಮಾರು ಒಂದು ಮೀಟರ್ ಉದ್ದ ಮತ್ತು ಅರವತ್ತೆಂಟು ಸೆಂಟಿಮೀಟರ್ ಅಗಲ ಮತ್ತು ಅರವತ್ತೆಂಟು ಸೆಂಟಿಮೀಟರ್ ಎತ್ತರವಾಗಿರುವ ಮಂಜೂಷವನ್ನು ಮಾಡಬೇಕು.</verse>
				<verse number="11">ಅದನ್ನು ಶುದ್ಧ ಬಂಗಾರದಿಂದ ಒಳಗೂ ಹೊರಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ತೋರಣವನ್ನು ಮಾಡಿಸಬೇಕು.</verse>
				<verse number="12">ಅದಕ್ಕೆ ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ ಎಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇಡಬೇಕು.</verse>
				<verse number="13">ಆಮೇಲೆ ಜಾಲಿ ಮರದ ಕೋಲುಗಳನ್ನು ಮಾಡಿಸಿ, ಅವುಗಳಿಗೆ ಬಂಗಾರದಿಂದ ಹೊದಿಸಬೇಕು.</verse>
				<verse number="14">ಮಂಜೂಷವನ್ನು ಹೊರುವುದಕ್ಕಾಗಿ ಕೋಲುಗಳನ್ನು ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.</verse>
				<verse number="15">ಮಂಜೂಷದ ಬಳೆಗಳಲ್ಲಿಯೇ ಕೋಲುಗಳನ್ನು ಇಡಬೇಕು. ಅವುಗಳೊಳಗಿಂದ ಕೋಲುಗಳನ್ನು ತೆಗೆಯಬಾರದು.</verse>
				<verse number="16">ಮಂಜೂಷದಲ್ಲಿ ನಾನು ನಿನಗೆ ಕೊಡುವ ಒಡಂಬಡಿಕೆಯ ಶಾಸನದ ಹಲಗೆಯನ್ನು ಇಡಬೇಕು.</verse>
				<verse number="17">“ಸುಮಾರು ನೂರಹತ್ತು ಸೆಂಟಿಮೀಟರ್ ಉದ್ದವೂ ಎಪ್ಪತ್ತು ಸೆಂಟಿಮೀಟರ್ ಅಗಲವೂ ಇರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು.</verse>
				<verse number="18">ಕರುಣಾಸನದ ಎರಡು ತುದಿಗಳಲ್ಲಿ ಎರಡು ಬಂಗಾರದಿಂದ ಕೆರೂಬಿಗಳನ್ನು ನಕಾಸಿ ಕೆಲಸದಿಂದ ಮಾಡಿಸಬೇಕು.</verse>
				<verse number="19">ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನೂ ಇನ್ನೊಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನೂ ಮಾಡಿಸಬೇಕು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯನ್ನು ಮಾಡಿಸಬೇಕು.</verse>
				<verse number="20">ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿರುವಂತೆಯೂ ಕರುಣಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಕೆರೂಬಿಗಳ ಮುಖಗಳು ಎದುರುಬದುರಾಗಿ ಕರುಣಾಸನವನ್ನು ನೋಡುತ್ತಿರಬೇಕು.</verse>
				<verse number="21">ಕರುಣಾಸನವನ್ನು ಮಂಜೂಷದ ಮೇಲಿಡಬೇಕು ಮತ್ತು ಮಂಜೂಷದಲ್ಲಿ ನಾನು ನಿನಗೆ ಕೊಡುವ ಒಡಂಬಡಿಕೆಯ ಶಾಸನಗಳನ್ನು ಇಡಬೇಕು.</verse>
				<verse number="22">ನಾನು ಅಲ್ಲಿ ನಿನಗೆ ದರ್ಶನವನ್ನು ಕೊಟ್ಟು, ಕರುಣಾಸನದ ಮೇಲೆ ಒಡಂಬಡಿಕೆಯ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲರ ವಿಷಯದಲ್ಲಿ ನಾನು ನಿನಗೆ ಆಜ್ಞಾಪಿಸುವವುಗಳನ್ನೆಲ್ಲಾ ನಿನಗೆ ತಿಳಿಸುವೆನು.</verse>
				<verse number="23">“ಸುಮಾರು ತೊಂಬತ್ತು ಸೆಂಟಿಮೀಟರ್ ಉದ್ದ, ನಲವತ್ತೈದು ಸೆಂಟಿಮೀಟರ್ ಅಗಲ ಮತ್ತು ಅರವತ್ತೆಂಟು ಸೆಂಟಿಮೀಟರ್ ಎತ್ತರ ಇರುವ ಮೇಜನ್ನು ಜಾಲಿ ಮರದಿಂದ ಮಾಡಬೇಕು.</verse>
				<verse number="24">ಶುದ್ಧ ಬಂಗಾರದಿಂದ ಮೇಜನ್ನು ಹೊದಿಸಿ, ಅದರ ಸುತ್ತಲೂ ಬಂಗಾರದ ತೋರಣವನ್ನು ಮಾಡಬೇಕು.</verse>
				<verse number="25">ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡಪಟ್ಟಿಯನ್ನು ಮಾಡಿಸಿ, ಅಂಚಿನ ಸುತ್ತಲೂ ಬಂಗಾರದ ತೋರಣವನ್ನು ಮಾಡಬೇಕು.</verse>
				<verse number="26">ಇದಲ್ಲದೆ ಆ ಮೇಜಿಗೆ ಬಂಗಾರದ ನಾಲ್ಕು ಬಳೆಗಳನ್ನು ಮಾಡಿ, ಅವುಗಳನ್ನು ಅದರ ನಾಲ್ಕು ಕಾಲುಗಳಲ್ಲಿರುವ ನಾಲ್ಕು ಮೂಲೆಗಳಿಗೆ ಜೋಡಿಸಬೇಕು.</verse>
				<verse number="27">ಅಂಚಿಗೆ ಸಮೀಪವಾಗಿ ಮೇಜನ್ನು ಹೊತ್ತುಕೊಂಡು ಹೋಗಲು ಇರುವ ಕೋಲುಗಳಿಗೆ ಬಳೆಗಳು ಇರಬೇಕು.</verse>
				<verse number="28">ಮೇಜನ್ನು ಹೊರುವುದಕ್ಕಾಗಿ ಕೋಲುಗಳನ್ನು, ತೋರಣವನ್ನು ಜಾಲಿ ಮರದಿಂದ ಮಾಡಿ, ಬಂಗಾರದಿಂದ ಹೊದಿಸಬೇಕು.</verse>
				<verse number="29">ಇದಲ್ಲದೆ ನೀನು ಪಾತ್ರೆಗಳನ್ನು, ಧೂಪಾರತಿಗಳನ್ನು, ಮುಚ್ಚಳಗಳನ್ನು ಪಾನಾರ್ಪಣೆಗೆ ಹೂಜೆಗಳನ್ನೂ ಬೇಕಾದ ಬಟ್ಟಲುಗಳನ್ನೂ, ಶುದ್ಧ ಬಂಗಾರದಿಂದ ಮಾಡಬೇಕು.</verse>
				<verse number="30">ಮೇಜಿನ ಮೇಲೆ ನೈವೇದ್ಯದ ರೊಟ್ಟಿಯನ್ನು ಯಾವಾಗಲೂ ನನ್ನ ಮುಂದೆ ಇಡಬೇಕು.</verse>
				<verse number="31">“ಶುದ್ಧ ಬಂಗಾರದಿಂದ ದೀಪಸ್ತಂಭವನ್ನು ಮಾಡಬೇಕು. ಅದರ ಬುಡವನ್ನೂ ಕಂಬವನ್ನೂ ನಕಾಸಿ ಕೆಲಸದಿಂದ ಮಾಡಬೇಕು. ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳಂತೆಯೂ ಹಣತೆಗಳಂತೆಯೂ ಮೊಗ್ಗುಗಳಂತೆಯೂ ಇರಬೇಕು.</verse>
				<verse number="32">ದೀಪಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿರಬೇಕು. ಅಂದರೆ ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬರಬೇಕು.</verse>
				<verse number="33">ಒಂದು ಕೊಂಬೆಯಲ್ಲಿ ಬಾದಾಮಿ ಪುಷ್ಟದಂತಿರುವ ಮೂರು ಹಣತೆಗಳು, ಮೊಗ್ಗು ಪುಷ್ಟಗಳಿರಬೇಕು ಮತ್ತು ಮತ್ತೊಂದು ಕೊಂಬೆಯಲ್ಲಿ ಬಾದಾಮಿಯ ಪುಷ್ಟವಿದ್ದ ಮೂರು ಹಣತೆಗಳು, ಮೊಗ್ಗು ಪುಷ್ಟಗಳಿರಬೇಕು. ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿಯೂ ಇರಬೇಕು.</verse>
				<verse number="34">ದೀಪಸ್ತಂಭದಲ್ಲಿಯೇ ಬಾದಾಮಿ ಹೂವುಗಳಂತೆಯೂ ಮೊಗ್ಗುಗಳಂತೆಯೂ ಅದಕ್ಕೊಂದು ಪುಷ್ಪದ ಆಕಾರದಲ್ಲಿ ನಾಲ್ಕು ಹಣತೆಗಳು ಇರಬೇಕು.</verse>
				<verse number="35">ದೀಪಸ್ತಂಭದಿಂದ ಹೊರಬರುವ ಒಂದು ಮೊಗ್ಗು ಮೊದಲ ಜೋಡಿ ಕೊಂಬೆಗಳ ಅಡಿಯಲ್ಲಿರಬೇಕು. ಎರಡನೇ ಮೊಗ್ಗು ಎರಡನೇ ಜೋಡಿಯ ಅಡಿಯಲ್ಲಿ ಮತ್ತು ಮೂರನೆಯ ಮೊಗ್ಗು ಮೂರನೆಯ ಜೋಡಿಯ ಅಡಿಯಲ್ಲಿ ಹೀಗೆ ಆರು ಕೊಂಬೆಗಳು ಇರಬೇಕು.</verse>
				<verse number="36">ಅದರ ಮೊಗ್ಗುಗಳೂ ಕೊಂಬೆಗಳೂ ಅದರಿಂದಲೇ ಬಂದಿರಬೇಕು. ದೀಪಸ್ತಂಭವನ್ನೆಲ್ಲಾ ಶುದ್ಧ ಬಂಗಾರದ ಒಂದೇ ಅಚ್ಚಿನಲ್ಲಿ ಬರೆದ ಕಲಾಕೃತಿಯಾಗಿರಬೇಕು.</verse>
				<verse number="37">“ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶಕೊಡುವಂತೆ ಅವುಗಳನ್ನು ಹೊತ್ತಿಸಬೇಕು.</verse>
				<verse number="38">ಇದಲ್ಲದೆ ಅದರ ಕುಡಿ ಕತ್ತರಿಸುವ ಕತ್ತರಿಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು.</verse>
				<verse number="39">ದೀಪಸ್ತಂಭವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಒಂದು ತಲಾಂತು ಶುದ್ಧ ಬಂಗಾರದಿಂದ ಮಾಡಬೇಕು.</verse>
				<verse number="40">ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಅವುಗಳನ್ನು ಮಾಡುವಂತೆ ನೋಡಿಕೋ.</verse>
			</chapter>
			<chapter number="26">
				<verse number="1">“ಗುಡಾರವನ್ನು ಹತ್ತು ಪರದೆಗಳಿಂದ ಮಾಡಿ, ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ಕೌಶಲ್ಯದ ಕೆಲಸದಿಂದಲೂ ಮಾಡಿದ ಕೆರೂಬಿಗಳುಳ್ಳವುಗಳಾಗಿಯೂ ಇರಬೇಕು.</verse>
				<verse number="2">ಎಲ್ಲಾ ಪರದೆಗಳೂ ಒಂದೇ ಅಳತೆಯವುಗಳಾಗಿರಬೇಕು. ಪ್ರತಿಯೊಂದು ಪರದೆಯು ಸುಮಾರು ಹದಿಮೂರು ಮೀಟರ್ ಉದ್ದ ಮತ್ತು ಎರಡು ಮೀಟರ್ ಅಗಲವಿರಬೇಕು.</verse>
				<verse number="3">ಐದು ಪರದೆಗಳನ್ನು ಒಂದಕ್ಕೊಂದು ಜೋಡಿಸಬೇಕು ಮತ್ತು ಇನ್ನುಳಿದ ಐದು ಪರದೆಗಳನ್ನೂ ಒಂದಕ್ಕೊಂದು ಜೋಡಿಸಬೇಕು.</verse>
				<verse number="4">ಕೊನೆಯ ಪರದೆಯ ಅಂಚಿನ ಒಂದು ಜೋಡಣೆಯ ಸ್ಥಳದಲ್ಲಿ ನೀಲಿ ದಾರಿನ ಕುಣಿಕೆಗಳನ್ನು ಮಾಡಿ, ಎರಡನೆಯ ಜೋಡಣೆಯ ಕಟ್ಟಕಡೆಯ ಪರದೆಯ ಅಂಚಿನಲ್ಲಿಯೂ ಅದೇ ಪ್ರಕಾರ ಮಾಡಬೇಕು.</verse>
				<verse number="5">ಒಂದು ಪರದೆಯನ್ನು ಜೋಡಿಸುವ ಸ್ಥಳದಲ್ಲಿ ಇರುವ ಇನ್ನೊಂದು ಪರದೆಯ ಕೊನೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು. ಆ ಕುಣಿಕೆಗಳು ಒಂದಕ್ಕೊಂದು ಎದುರುಬದುರಾಗಿ ಹಿಡಿದುಕೊಳ್ಳುವವುಗಳಾಗಿರಬೇಕು.</verse>
				<verse number="6">ಬಂಗಾರದ ಐವತ್ತು ಕೊಂಡಿಗಳನ್ನು ಮಾಡಿ, ಅವುಗಳಿಂದ ಪರದೆಗಳನ್ನು ಒಂದಕ್ಕೊಂದು ಜೋಡಿಸಬೇಕು. ಹೀಗೆ ಅದು ಒಂದೇ ಗುಡಾರವಾಗಬೇಕು.</verse>
				<verse number="7">“ಇದಲ್ಲದೆ ನೀನು ಗುಡಾರದ ಮೇಲೆ ಹೊದಿಸುವುದಕ್ಕಾಗಿ ಮೇಕೆಯ ಕೂದಲಿನಿಂದ ಹನ್ನೊಂದು ಪರದೆಗಳನ್ನು ಮಾಡಬೇಕು.</verse>
				<verse number="8">ಒಂದೊಂದು ಪರದೆಯು ಸುಮಾರು ಹದಿಮೂರುವರೆ ಮೀಟರ್ ಉದ್ದ ಮತ್ತು ಒಂದುವರೆ ಮೀಟರ್ ಅಗಲ ಇರಬೇಕು. ಹನ್ನೊಂದು ಪರದೆಗಳೂ ಒಂದೇ ಅಳತೆಯಾಗಿರಬೇಕು.</verse>
				<verse number="9">ಐದು ಪರದೆಗಳನ್ನು ಒಂದಾಗಿ ಜೋಡಿಸಿ ಇನ್ನುಳಿದ ಆರು ಪರದೆಗಳನ್ನು ಒಂದಾಗಿ ಜೋಡಿಸಿ, ಆರನೆಯ ಪರದೆಯನ್ನು ಗುಡಾರದ ಮುಂಭಾಗದಲ್ಲಿ ಮಡಿಸಿ ತೂಗಾಡಬಿಡಬೇಕು.</verse>
				<verse number="10">ಜೋಡಿಸುವಾಗ ಕೊನೆಯ ಒಂದು ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು, ಜೋಡಣೆಯಲ್ಲಿರುವ ಕೊನೆಯ ಎರಡನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು.</verse>
				<verse number="11">ಇದಲ್ಲದೆ ಕಂಚಿನ ಐವತ್ತು ಕೊಂಡಿಗಳನ್ನು ಮಾಡಿ, ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ, ಒಂದೇ ಡೇರೆ ಆಗುವಂತೆ ಜೋಡಿಸಬೇಕು.</verse>
				<verse number="12">ಗುಡಾರದ ಪರದೆಗಳನ್ನು ಮಿಕ್ಕಿದ ತೂಗಾಡುವಂಥದ್ದು ಎಂದರೆ ಉಳಿದ ಅರ್ಧ ಪರದೆಯು ಗುಡಾರದ ಹಿಂಭಾಗದಲ್ಲಿ ತೂಗಾಡಲಿ.</verse>
				<verse number="13">ಗುಡಾರದ ಪರದೆಗಳ ಉದ್ದದಲ್ಲಿ ಈಚೆ ಆಚೆ ಮಿಕ್ಕಿದ ಮೊಳವು ಗುಡಾರದ ಈಚೆ ಆಚೆಯಲ್ಲಿ ಅದನ್ನು ಮುಚ್ಚುವುದಕ್ಕಾಗಿ ತೂಗಾಡಲಿ.</verse>
				<verse number="14">ಗುಡಾರದ ಮೇಲ್ಹೊದಿಕೆಯನ್ನು ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದಿಂದ ಮಾಡಬೇಕು, ಅದರ ಮೇಲೆ ಕಡಲುಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಬೇಕು.</verse>
				<verse number="15">“ಗುಡಾರಕ್ಕೆ ಜಾಲಿ ಮರದಿಂದ ಚೌಕಟ್ಟುಗಳನ್ನು ಮಾಡಬೇಕು.</verse>
				<verse number="16">ಒಂದೊಂದು ಚೌಕಟ್ಟಿನ ಉದ್ದವು ಸುಮಾರು ನಾಲ್ಕುವರೆ ಮೀಟರ್ ಮತ್ತು ಅಗಲ ಅರವತ್ತೆಂಟು ಸೆಂಟಿಮೀಟರ್ ಇರಬೇಕು.</verse>
				<verse number="17">ಒಂದು ಚೌಕಟ್ಟಿಗೆ ಒಂದಕ್ಕೊಂದು ಸರಿಯಾದ ಅಂತರದಲ್ಲಿ ಎರಡು ಕೈಗಳನ್ನು ಮಾಡಬೇಕು. ಅದೇ ಪ್ರಕಾರ ಗುಡಾರದ ಎಲ್ಲಾ ಚೌಕಟ್ಟುಗಳಿಗೆ ಮಾಡಬೇಕು.</verse>
				<verse number="18">ಗುಡಾರದ ದಕ್ಷಿಣ ಭಾಗದಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಬೇಕು.</verse>
				<verse number="19">ಇಪ್ಪತ್ತು ಚೌಕಟ್ಟುಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಬೇಕು ಮತ್ತು ಒಂದೊಂದು ಚೌಕಟ್ಟಿನ ಕೆಳಗೆ ಅದರ ಎರಡು ಪಟ್ಟಿಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಬೇಕು.</verse>
				<verse number="20">ಹಾಗೆಯೇ ಗುಡಾರದ ಉತ್ತರ ದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನೂ,</verse>
				<verse number="21">ಮತ್ತು ಒಂದೊಂದು ಚೌಕಟ್ಟಿನ ಕೆಳಗೆ ಎರಡೆರಡು ಗದ್ದಿಗೇ ಕಲ್ಲುಗಳಂತೆ ನಲವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನೂ,</verse>
				<verse number="22">ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮದ ಕಡೆಗೆ ಆರು ಚೌಕಟ್ಟುಗಳನ್ನು ಮಾಡಬೇಕು.</verse>
				<verse number="23">ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಬೇಕು.</verse>
				<verse number="24">ಈ ಮೂಲೆಗಳನ್ನು ಅಡಿಯಲ್ಲಿ ಜೋಡಿಸಿರಬೇಕು. ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿರಬೇಕು. ಇದೇ ರೀತಿಯಲ್ಲಿ ಅವು ಎರಡು ಮೂಲೆಗಳಲ್ಲಿ ಎರಡಕ್ಕೂ ಇರಬೇಕು.</verse>
				<verse number="25">ಹೀಗೆ ಅವು ಎಂಟು ಚೌಕಟ್ಟುಗಳೂ ಒಂದೊಂದು ಚೌಕಟ್ಟಿನ ಕೆಳಗೆ ಎರಡೆರಡು ಕೂರುಗದ್ದಿಗೇ ಕಲ್ಲುಗಳೂ ಇರುವುದರಿಂದ ಅವುಗಳಿಗೆ ಹದಿನಾರು ಬೆಳ್ಳಿಯ ಕೂರುಗದ್ದಿಗೇ ಕಲ್ಲುಗಳೂ ಇರಬೇಕು.</verse>
				<verse number="26">“ಜಾಲಿ ಮರದಿಂದ ಅಗುಳಿಗಳನ್ನು ಮಾಡಬೇಕು. ಗುಡಾರದ ಒಂದು ಕಡೆಯ ಚೌಕಟ್ಟುಗಳಿಗೆ ಐದು ಅಗುಳಿಗಳನ್ನು,</verse>
				<verse number="27">ಗುಡಾರದ ಇನ್ನೊಂದು ಭಾಗದ ಚೌಕಟ್ಟುಗಳಿಗೆ ಐದು ಅಗುಳಿಗಳನ್ನು, ಅದರ ಹಿಂದುಗಡೆಯ ಅಂದರೆ ಪಶ್ಚಿಮ ಭಾಗದಲ್ಲಿರುವ ಚೌಕಟ್ಟುಗಳಿಗೆ ಐದು ಅಗುಳಿಗಳನ್ನು ಮಾಡಬೇಕು.</verse>
				<verse number="28">ಮಧ್ಯದ ಅಗುಳಿಯು ಚೌಕಟ್ಟುಗಳ ನಡುವೆ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಮುಟ್ಟಿರಬೇಕು.</verse>
				<verse number="29">ಆ ಚೌಕಟ್ಟುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳಿಗೆ ಬಂಗಾರದಿಂದ ಬಳೆಗಳನ್ನು ಮಾಡಬೇಕು. ಅಗುಳಿಗಳನ್ನು ಬಂಗಾರದಿಂದ ಹೊದಿಸಬೇಕು.</verse>
				<verse number="30">“ಹೀಗೆ ಬೆಟ್ಟದ ಮೇಲೆ ನಾನು ನಿನಗೆ ತೋರಿಸಿದ ಕ್ರಮದ ಪ್ರಕಾರ ಗುಡಾರವನ್ನು ನಿಲ್ಲಿಸಬೇಕು.</verse>
				<verse number="31">“ಪರದೆಯನ್ನು ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಬೇಕು. ಅದರ ಮೇಲೆ ಕೌಶಲ್ಯದಿಂದ ಕಸೂತಿಹಾಕಿ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು.</verse>
				<verse number="32">ಜಾಲಿ ಮರದ ನಾಲ್ಕು ಸ್ತಂಭಗಳನ್ನು ಮಾಡಿ, ಬಂಗಾರ ತಗಡುಗಳಿಂದ ಅವುಗಳನ್ನು ಹೊದಿಸಿದರು. ಅವುಗಳಿಗೆ ಬಂಗಾರದ ಕೊಂಡಿಗಳನ್ನು ಮಾಡಿ, ಬೆಳ್ಳಿಯ ನಾಲ್ಕು ಗದ್ದಿಗೇ ಕಲ್ಲುಗಳ ಮೇಲೆ ಊರಿಕೊಂಡಿರುವ ಜಾಲಿ ಮರದ ಸ್ತಂಭಗಳಲ್ಲಿ ಅದನ್ನು ತೂಗು ಹಾಕಬೇಕು.</verse>
				<verse number="33">ಆ ಪರದೆಯನ್ನು ಕೊಂಡಿಗಳ ಕೆಳಗೆ ತೂಗುಹಾಕಿ, ಪರದೆಯೊಳಗೆ ಒಡಂಬಡಿಕೆಯ ಮಂಜೂಷವನ್ನು ತರಬೇಕು. ಪರಿಶುದ್ಧ ಸ್ಥಳಕ್ಕೂ ಮಹಾಪರಿಶುದ್ಧ ಸ್ಥಳಕ್ಕೂ ಮಧ್ಯದಲ್ಲಿ ಆ ಪರದೆಯನ್ನು ವಿಂಗಡಿಸಬೇಕು.</verse>
				<verse number="34">ಮಹಾಪರಿಶುದ್ಧ ಸ್ಥಳದಲ್ಲಿ ಒಡಂಬಡಿಕೆಯ ಮಂಜೂಷದ ಮೇಲೆ ಕರುಣಾಸನವನ್ನು ಇಡಬೇಕು.</verse>
				<verse number="35">ಇದಲ್ಲದೆ ಗುಡಾರದ ಉತ್ತರ ಕಡೆಯಲ್ಲಿ ಪರದೆಯ ಹೊರಗೆ ಮೇಜನ್ನು ಇಡಬೇಕು ಮತ್ತು ದೀಪಸ್ತಂಭವನ್ನು ಅದರ ಎದುರಾಗಿ ದಕ್ಷಿಣದ ದಿಕ್ಕಿನಲ್ಲಿ ಇಡಬೇಕು.</verse>
				<verse number="36">“ಗುಡಾರದ ಬಾಗಿಲಿಗೆ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರುಗಳಿಂದ ಹೊಸೆದು ಕಸೂತಿ ಕೆಲಸಮಾಡಿದ ಪರದೆಯನ್ನು ಮಾಡಬೇಕು.</verse>
				<verse number="37">ಆ ಪರದೆಗೆ ಜಾಲಿ ಮರದ ಐದು ಕಂಬಗಳನ್ನು ಮಾಡಿ, ಅವುಗಳನ್ನು ಬಂಗಾರದಿಂದ ಹೊದಿಸಬೇಕು. ಅವುಗಳ ಕೊಂಡಿಗಳು ಬಂಗಾರದವುಗಳಾಗಿರಬೇಕು. ಅವುಗಳಿಗೆ ಐದು ಗದ್ದಿಗೇ ಕಲ್ಲುಗಳನ್ನು ಕಂಚಿನಿಂದ ಎರಕಹೊಯಿಸಬೇಕು.</verse>
			</chapter>
			<chapter number="27">
				<verse number="1">“ಇದಲ್ಲದೆ ಜಾಲಿ ಮರದಿಂದ ಬಲಿಪೀಠವನ್ನು ಮಾಡಬೇಕು. ಅದರ ಎತ್ತರವು ಸುಮಾರು ಒಂದು ಮೀಟರ್ ಇರಬೇಕು. ಅದರ ಉದ್ದ ಮತ್ತು ಅಗಲವು ಸುಮಾರು ಎರಡೂವರೆ ಮೀಟರ್ ಚಚ್ಚೌಕವಾಗಿರಬೇಕು.</verse>
				<verse number="2">ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಬೇಕು. ಆ ಕೊಂಬುಗಳು ಆ ಬಲಿಪೀಠಕ್ಕೆ ಏಕವಾಗಿರಬೇಕು. ಅವುಗಳನ್ನು ಕಂಚಿನಿಂದ ಹೊದಿಸಬೇಕು.</verse>
				<verse number="3">ಅದರ ಬೂದಿಯನ್ನು ತೆಗೆಯುವದಕ್ಕಾಗಿ ಬಟ್ಟಲುಗಳು, ಸಲಿಕೆಗಳು, ಮುಳ್ಳುಚಮಚಗಳು, ಬೋಗುಣಿಗಳು, ಅಗ್ಗಿಷ್ಟಿಕೆಗಳು ಮತ್ತು ಬಲಿಪೀಠದ ಉಪಕರಣಗಳನ್ನೆಲ್ಲಾ ಕಂಚಿನಿಂದ ಮಾಡಬೇಕು.</verse>
				<verse number="4">ಅದಕ್ಕೆ ಹೆಣಿಗೆ ಕೆಲಸದಿಂದ ಕಂಚಿನ ಜಾಳಿಗೆಯನ್ನು ಮಾಡಿ, ಆ ಜಾಳಿಗೆಯ ನಾಲ್ಕು ಮೂಲೆಗಳಿಗೆ ಕಂಚಿನ ನಾಲ್ಕು ಬಳೆಗಳನ್ನು ಮಾಡಬೇಕು.</verse>
				<verse number="5">ಆ ಜಾಳಿಗೆಯು ಬಲಿಪೀಠದ ಸುತ್ತಲಿರುವ ಕಟ್ಟಿಗೆಯ ಕಟ್ಟೆಯ ಕೆಳಗೆ ಇದ್ದು, ಅದನ್ನು ಬಲಿಪೀಠದ ಕೆಳಭಾಗದಿಂದ ಮಧ್ಯದವರೆಗೆ ಇರುವಂತೆ ಮಾಡಬೇಕು.</verse>
				<verse number="6">ಬಲಿಪೀಠಕ್ಕೆ ಜಾಲಿ ಮರದಿಂದ ಕೋಲುಗಳನ್ನು ಮಾಡಿ, ಅವುಗಳನ್ನು ಕಂಚಿನಿಂದ ಹೊದಿಸಬೇಕು.</verse>
				<verse number="7">ಆ ಕೋಲುಗಳನ್ನು ಬಳೆಗಳಲ್ಲಿ ಸೇರಿಸಬೇಕು. ಅವುಗಳು ಬಲಿಪೀಠವನ್ನು ಹೊರುವುದಕ್ಕೆ ಅದರ ಎರಡೂ ಬದಿಯಲ್ಲಿ ಇರಬೇಕು.</verse>
				<verse number="8">ಬಲಿಪೀಠವನ್ನು ಚೌಕಟ್ಟುಗಳಿಂದ ಪೊಳ್ಳಾಗಿರುವಂತೆ ಮಾಡಬೇಕು. ಬೆಟ್ಟದಲ್ಲಿ ನಿನಗೆ ತೋರಿಸಿದಂತೆ ಅದನ್ನು ಮಾಡಬೇಕು.</verse>
				<verse number="9">“ಗುಡಾರದ ಅಂಗಳವನ್ನು ಮಾಡಬೇಕು. ಹೇಗೆಂದರೆ ದಕ್ಷಿಣ ದಿಕ್ಕಿನಲ್ಲಿರುವ ಅಂಗಳಕ್ಕೋಸ್ಕರ ನಯವಾಗಿ ಹೊಸೆದ ನಾರಿನ ಪರದೆಗಳನ್ನು ಮಾಡಬೇಕು. ಅವು ಸುಮಾರು ನಲವತ್ತೈದು ಮೀಟರ್ ಉದ್ದವಾಗಿರಬೇಕು.</verse>
				<verse number="10">ಆ ಕಡೆಯಲ್ಲಿ ಇಪ್ಪತ್ತು ಸ್ತಂಭಗಳು ಮತ್ತು ಅವುಗಳಿಗೆ ಇಪ್ಪತ್ತು ಕಂಚಿನ ಗದ್ದಿಗೇ ಕಲ್ಲುಗಳಿರಬೇಕು. ಸ್ತಂಭಗಳ ಕೊಂಡಿಗಳನ್ನು ಮತ್ತು ಅವುಗಳ ಪಟ್ಟಿಗಳನ್ನು ಬೆಳ್ಳಿಯಿಂದ ಮಾಡಬೇಕು.</verse>
				<verse number="11">ಹಾಗೆಯೇ ಉತ್ತರ ದಿಕ್ಕಿನ ಪರದೆಗಳು ಸುಮಾರು ನಲವತ್ತೈದು ಮೀಟರ್ ಉದ್ದವಾಗಿರಬೇಕು, ಇಪ್ಪತ್ತು ಸ್ತಂಭಗಳು ಮತ್ತು ಇಪ್ಪತ್ತು ಕಂಚಿನ ಗದ್ದಿಗೇ ಕಲ್ಲುಗಳಿರಬೇಕು. ಆ ಸ್ತಂಭಗಳ ಕೊಂಡಿಗಳು ಮತ್ತು ಕಟ್ಟುಗಳು ಬೆಳ್ಳಿಯಿಂದ ಮಾಡಬೇಕು.</verse>
				<verse number="12">“ಅಂಗಳದ ಪಶ್ಚಿಮ ಭಾಗದಲ್ಲಿ ಸುಮಾರು ಇಪ್ಪತ್ತಮೂರು ಮೀಟರ್ ಉದ್ದವಾದ ಪರದೆಗಳು, ಹತ್ತು ಸ್ತಂಭಗಳು ಮತ್ತು ಆ ಸ್ತಂಭಗಳಿಗೆ ಹತ್ತು ಗದ್ದಿಗೇ ಕಲ್ಲುಗಳಿರಬೇಕು.</verse>
				<verse number="13">ಪೂರ್ವದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಅಂಗಳದ ಅಗಲವು ಸುಮಾರು ಇಪ್ಪತ್ತಮೂರು ಮೀಟರ್ ಉದ್ದವಾಗಿರಬೇಕು.</verse>
				<verse number="14">ದ್ವಾರದ ಒಂದು ಬದಿಯ ಪರದೆಗಳು ಸುಮಾರು ಆರುವರೆ ಮೀಟರ್ ಉದ್ದವಾಗಿರಬೇಕು. ಅವುಗಳಿಗೆ ಮೂರು ಸ್ತಂಭಗಳು, ಆ ಸ್ತಂಭಗಳಿಗೆ ಮೂರು ಕಾಲು ಗದ್ದಿಗೇ ಕಲ್ಲುಗಳು ಇರಬೇಕು.</verse>
				<verse number="15">ಎರಡೂ ಕಡೆಗಳಲ್ಲಿ ಸುಮಾರು ಆರುವರೆ ಮೀಟರ್ ಉದ್ದವಾದ ಪರದೆಗಳು, ಅವುಗಳಿಗೆ ಮೂರು ಸ್ತಂಭಗಳು ಮತ್ತು ಮೂರು ಗದ್ದಿಗೇ ಕಲ್ಲುಗಳಿರಬೇಕು.</verse>
				<verse number="16">“ಗುಡಾರದ ಅಂಗಳದ ದ್ವಾರಕ್ಕಾಗಿ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸಮಾಡಿದ ಇಪ್ಪತ್ತು ಮೊಳದ ಪರದೆ, ಅದಕ್ಕೆ ನಾಲ್ಕು ಸ್ತಂಭಗಳು ಮತ್ತು ನಾಲ್ಕು ಗದ್ದಿಗೇ ಕಲ್ಲುಗಳಿರಬೇಕು.</verse>
				<verse number="17">ಅಂಗಳದ ಸುತ್ತಲಿರುವ ಸ್ತಂಭಗಳಿಗೆಲ್ಲಾ ಬೆಳ್ಳಿಯ ಕಟ್ಟುಗಳು, ಬೆಳ್ಳಿಯ ಕೊಂಡಿಗಳು ಮತ್ತು ಗದ್ದಿಗೇ ಕಲ್ಲುಗಳು ಕಂಚಿನದ್ದಾಗಿರಬೇಕು.</verse>
				<verse number="18">ಅಂಗಳದ ಉದ್ದ ಸುಮಾರು ನಲವತ್ತೈದು ಮೀಟರ್, ಅಗಲ ಸುಮಾರು ಇಪ್ಪತ್ತಮೂರು ಮೀಟರ್, ಅದರ ಎತ್ತರ ಸುಮಾರು ಎರಡು ಮೀಟರ್ ಇರಬೇಕು. ಪರದೆಗಳು ನಯವಾದ ನಾರಿನಿಂದ ಹೊಸೆದದ್ದಾಗಿದ್ದು, ಅವುಗಳ ಕುಳಿಗಳನ್ನು ಕಂಚಿನಿಂದ ಮಾಡಿಸಬೇಕು.</verse>
				<verse number="19">ಗುಡಾರದ ಕೆಲಸಕ್ಕೆ ಬೇಕಾಗುವ ಎಲ್ಲಾ ಉಪಕರಣಗಳು, ಅಂಗಳದ ಸುತ್ತಲೂ ಇರುವ ಎಲ್ಲಾ ಗೂಟಗಳೂ ಕಂಚಿನಿಂದ ಮಾಡಿದ್ದವುಗಳಾಗಿರಬೇಕು.</verse>
				<verse number="20">“ಬೆಳಕಿಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿರುವಂತೆ ಅವರು ಕುಟ್ಟಿದ ಶುದ್ಧವಾದ ಓಲಿವ್ ಎಣ್ಣೆಯನ್ನು ನನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕು.</verse>
				<verse number="21">ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ಇಸ್ರಾಯೇಲರಿಗೆ ಮತ್ತು ಅವರ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರಬೇಕು.</verse>
			</chapter>
			<chapter number="28">
				<verse number="1">“ನನಗೆ ಯಾಜಕ ಸೇವೆ ಮಾಡುವುದಕ್ಕೆ ನೀನು ಇಸ್ರಾಯೇಲರಿಂದ ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್ ಎಂಬುವರನ್ನು ನಿನ್ನ ಹತ್ತಿರ ಬರಮಾಡಬೇಕು.</verse>
				<verse number="2">ನಿನ್ನ ಸಹೋದರನಾದ ಆರೋನನ ಗೌರವಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು.</verse>
				<verse number="3">ಇದಲ್ಲದೆ ನಾನು ಜ್ಞಾನದ ಆತ್ಮದಿಂದ ತುಂಬಿದ ವಿವೇಕದ ಹೃದಯವಿರುವವರ ಸಂಗಡ ನೀನು ಮಾತನಾಡು, ಅವರು ಆರೋನನ ವಸ್ತ್ರಗಳನ್ನು ಮಾಡಲಿ. ಅವನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವುದಕ್ಕೆ ಪ್ರತಿಷ್ಠಿತನಾಗುವನು.</verse>
				<verse number="4">ಅವರು ಮಾಡಬೇಕಾದ ವಸ್ತ್ರಗಳು ಇವು: ಎದೆಪದಕವು, ಏಫೋದ್, ನಿಲುವಂಗಿ, ಕಸೂತಿಯ ಕೆಲಸದ ಮೇಲಂಗಿ, ಮುಂಡಾಸ, ನಡುಕಟ್ಟು. ನಿನ್ನ ಸಹೋದರನಾದ ಆರೋನನೂ ಅವನ ಪುತ್ರರೂ ನನ್ನ ಯಾಜಕರಾಗಿ ಸೇವೆ ಮಾಡುವುದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಿಸು.</verse>
				<verse number="5">ಅವರು ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರವನ್ನು ಮತ್ತು ನಯವಾದ ನಾರುಬಟ್ಟೆಯನ್ನು ಹೊಸೆದು ಉಪಯೋಗಿಸಬೇಕು.</verse>
				<verse number="6">“ಏಫೋದನ್ನು ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸ ಮಾಡಬೇಕು.</verse>
				<verse number="7">ಈ ಕವಚಕ್ಕೆ ಅದರ ಎರಡೂ ಕೊನೆಗಳನ್ನು ಜೋಡಿಸುವುದಕ್ಕೆ ಎರಡು ಹೆಗಲು ಪಟ್ಟಿಗಳಿರಬೇಕು.</verse>
				<verse number="8">ಅದರ ಮೇಲಿರುವ ಕಸೂತಿ ಕೆಲಸದ ಏಫೋದಿನ ನಡುಕಟ್ಟನ್ನು ಒಂದೇ ರೀತಿಯ ವಸ್ತುಗಳಿಂದ ತಯಾರಿಸಬೇಕು ಅಂದರೆ ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಿದ್ದಾಗಿರಬೇಕು.</verse>
				<verse number="9">“ನೀನು ಎರಡು ಗೋಮೇಧಿಕ ರತ್ನಗಳನ್ನು ತೆಗೆದುಕೊಂಡು ಇಸ್ರಾಯೇಲರ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು.</verse>
				<verse number="10">ಒಂದು ರತ್ನದ ಮೇಲೆ ಆರು ಹೆಸರುಗಳನ್ನು ಮತ್ತೊಂದು ರತ್ನದ ಮೇಲೆ ಮಿಕ್ಕ ಆರು ಹೆಸರುಗಳನ್ನು ಅವರವರ ಜನನದ ಪ್ರಕಾರ ಕೆತ್ತಬೇಕು.</verse>
				<verse number="11">ಶಿಲ್ಪಿಗನು ಕಲ್ಲಿನ ಮೇಲೆ ಮುದ್ರೆ ಕೆತ್ತುವ ಪ್ರಕಾರ, ಆ ಎರಡೂ ರತ್ನಗಳ ಮೇಲೆ ಇಸ್ರಾಯೇಲರ ಮಕ್ಕಳ ಹೆಸರುಗಳನ್ನು ಕೆತ್ತಿಸಿ, ಅವುಗಳನ್ನು ಬಂಗಾರದ ಜವೆಗಳಲ್ಲಿ ಹೊದಿಸಿದ್ದಾಗಿ ಮಾಡಬೇಕು.</verse>
				<verse number="12">ಆ ಎರಡು ರತ್ನಗಳನ್ನು ಏಫೋದಿನ ಹೆಗಲಿನ ಭಾಗದ ಮೇಲೆ ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗಿ ಇಡಬೇಕು. ಆರೋನನು ತನ್ನ ಎರಡು ಹೆಗಲುಗಳ ಮೇಲೆ ಅವರ ಹೆಸರುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಜ್ಞಾಪಕಾರ್ಥವಾಗಿ ಹೊರಬೇಕು.</verse>
				<verse number="13">ನೀನು ಬಂಗಾರದ ಜವೆಗಳನ್ನು ಮಾಡಬೇಕು.</verse>
				<verse number="14">ಹೊಸೆದ ಹಗ್ಗದಂತೆ ಶುದ್ಧ ಬಂಗಾರದ ಎರಡು ಸರಪಣಿಗಳನ್ನು ಹೆಣಿಗೆ ಕೆಲಸದಿಂದ ಮಾಡಿ, ಆ ಹೆಣೆದ ಸರಪಣಿಗಳ ಕೊನೆಗಳನ್ನು ಜವೆಗಳಿಗೆ ಸೇರಿಸಿಬೇಕು.</verse>
				<verse number="15">“ದೇವನಿರ್ಣಯ ಮಾಡುವ ಆತನ ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಂದರೆ ಏಫೋದಿನ ಕೆಲಸದ ಹಾಗೆಯೇ ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಿಸಬೇಕು.</verse>
				<verse number="16">ಅದು ಗೇಣು ಉದ್ದ, ಒಂದು ಗೇಣು ಅಗಲ ಮತ್ತು ಇದು ಎರಡು ಪದರುಳ್ಳದ್ದಾಗಿ ಚಚ್ಚೌಕವಾಗಿಯೂ ಇರಬೇಕು.</verse>
				<verse number="17">ನಂತರ ಅದರಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಜೋಡಿಸಬೇಕು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಫಟಿಕಗಳಿರಬೇಕು.</verse>
				<verse number="18">ಎರಡನೆಯ ಸಾಲಿನಲ್ಲಿ ಕೆಂಪರಲು, ನೀಲ ಮತ್ತು ಪಚ್ಚೆಗಳಿರಬೇಕು.</verse>
				<verse number="19">ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಗೋಮೇಧಿಕ ಮತ್ತು ಧೂಮ್ರಮಣಿಗಳಿರಬೇಕು.</verse>
				<verse number="20">ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಗೋಮೇಧಿಕ, ಸೂರ್ಯಕಾಂತ ಶಿಲೆ ಇವುಗಳನ್ನು ಬಂಗಾರದ ಜವೆಯ ಕಲ್ಲುಗಳಲ್ಲಿ ಸೇರಿಸಬೇಕು.</verse>
				<verse number="21">ಈ ರತ್ನಗಳು ಇಸ್ರಾಯೇಲರ ಗೋತ್ರದ ಹೆಸರುಗಳ ಪ್ರಕಾರ ಅವು ಹನ್ನೆರಡಾಗಿರಬೇಕು. ಒಂದೊಂದರ ಮೇಲೆ ಒಂದೊಂದು ಹೆಸರಿದ್ದು, ಹನ್ನೆರಡು ಗೋತ್ರಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು.</verse>
				<verse number="22">“ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ಹೆಣೆದ ಕೆಲಸವಾಗಿರುವ ಹುರಿಗಳಂತಿರುವ ಸರಪಣಿಯನ್ನು ಮಾಡಬೇಕು.</verse>
				<verse number="23">ಆ ಎದೆಪದಕದ ಮೇಲೆ ಬಂಗಾರದ ಎರಡು ಬಳೆಗಳನ್ನು ಮಾಡಿ, ಆ ಎರಡು ಬಳೆಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಹಾಕಬೇಕು.</verse>
				<verse number="24">ಬಂಗಾರದಿಂದ ಹೆಣೆದ ಆ ಎರಡು ಸರಪಣಿಗಳನ್ನು ಎದೆಪದಕದ ಕೊನೆಗಳಲ್ಲಿರುವ ಎರಡು ಬಳೆಗಳಲ್ಲಿ ಸೇರಿಸಬೇಕು.</verse>
				<verse number="25">ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಎರಡು ಜವೆಗಳಲ್ಲಿ ಸೇರಿಸಿ, ಏಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಬೇಕು.</verse>
				<verse number="26">ಅದಲ್ಲದೆ ಬಂಗಾರದ ಎರಡು ಉಂಗುರಗಳನ್ನು ಮಾಡಿ, ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿ, ಏಫೋದಿನ ಬದಿಗೆ ಒಳಗಡೆಯಲ್ಲಿ ಹಾಕಬೇಕು.</verse>
				<verse number="27">ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ, ಏಫೋದಿನ ಮುಂಬದಿಯ ಕೆಳಗಿನ ಎರಡು ಹೆಗಲಿನ ಪಟ್ಟಿಗಳಲ್ಲಿ, ಏಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಬೇಕು.</verse>
				<verse number="28">ಆ ಎದೆಪದಕವನ್ನು ಏಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವಂತೆಯೂ, ಎದೆಪದಕವು ಏಫೋದನ್ನು ಬಿಟ್ಟು ಅಲ್ಲಾಡದಂತೆಯೂ, ಅದರ ಉಂಗುರಗಳ ಮೂಲಕವಾಗಿ ಏಫೋದಿನ ಉಂಗುರಗಳಿಗೆ ನೀಲಿ ದಾರದಿಂದ ಕಟ್ಟಬೇಕು.</verse>
				<verse number="29">“ಹೀಗೆ ಆರೋನನು ಪರಿಶುದ್ಧ ಸ್ಥಳಕ್ಕೆ ಬರುವಾಗ ಇಸ್ರಾಯೇಲರ ಹೆಸರುಗಳನ್ನು ಯಾವಾಗಲೂ ಯೆಹೋವ ದೇವರ ಮುಂದೆ ಜ್ಞಾಪಕ ಮಾಡುವುದಕ್ಕಾಗಿ ನ್ಯಾಯದ ಎದೆಪದಕವನ್ನು ತನ್ನ ಹೃದಯದ ಮೇಲೆ ಹೊರಬೇಕು.</verse>
				<verse number="30">ನಿರ್ಣಯವನ್ನು ತಿಳಿಸುವ ಎದೆಪದಕದಲ್ಲಿ ಊರೀಮ್ ಮತ್ತು ತುಮ್ಮೀಮ್‌ಗಳನ್ನು ಇಡಬೇಕು. ಆರೋನನು ಯೆಹೋವ ದೇವರ ಸನ್ನಿಧಿಗೆ ಬರುವ ಸಮಯದಲ್ಲಿ ಅವು ಅವನ ಹೃದಯದ ಮೇಲೆ ಇರಬೇಕು. ಹೀಗೆ ಆರೋನನು ಯೆಹೋವ ದೇವರ ಮುಂದೆ ಯಾವಾಗಲೂ ಇಸ್ರಾಯೇಲರ ನಿರ್ಣಯಗಳನ್ನು ತನ್ನ ಹೃದಯದ ಮೇಲೆ ಹೊರಬೇಕು.</verse>
				<verse number="31">“ಏಫೋದಿನ ನಿಲುವಂಗಿಯನ್ನೆಲ್ಲಾ ನೀಲಿ ಬಣ್ಣದ ಬಟ್ಟೆಯಿಂದ ಮಾಡಬೇಕು.</verse>
				<verse number="32">ಅದರ ಮಧ್ಯದಲ್ಲಿ ಮೇಲ್ಗಡೆ ತಲೆದೂರಿಸುವುದಕ್ಕೆ ರಂದ್ರವಿರಬೇಕು. ಅದು ಹರಿಯದ ಆ ರಂದ್ರದ ಸುತ್ತಲೂ ನೇಯ್ಗೆ ಕಸೂತಿಯನ್ನು ಹಾಕಿಸಬೇಕು.</verse>
				<verse number="33">ನಿಲುವಂಗಿಯ ಅಂಚಿನ ಮೇಲೆ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ದಾಳಿಂಬೆ ಹಣ್ಣಿನಂತೆ ಅದರ ಅಂಚಿನ ಸುತ್ತಲೂ ಮಾಡಿ, ಅವುಗಳ ಮಧ್ಯದಲ್ಲಿ ಬಂಗಾರದ ಗಂಟೆಗಳನ್ನೂ ಸುತ್ತಲೂ ಇರಿಸಬೇಕು.</verse>
				<verse number="34">ಒಂದು ಗೆಜ್ಜೆ, ಒಂದು ದಾಳಿಂಬೆಯಂತಿರುವ ಚೆಂಡನ್ನು ಒಂದಾದ ಮೇಲೆ ಒಂದು ಮೇಲಂಗಿಯ ಅಂಚಿನ ಸುತ್ತಲೂ ಇರಬೇಕು.</verse>
				<verse number="35">ಇದು ಸೇವೆಗಾಗಿ ಆರೋನನ ಮೇಲೆ ಇರಬೇಕು. ಅವನು ಯೆಹೋವ ದೇವರ ಸಮ್ಮುಖದಲ್ಲಿ ಪರಿಶುದ್ಧ ಸ್ಥಳಕ್ಕೆ ಬರುತ್ತಾ ಹೋಗುತ್ತಾ ಇರುವ ಸಮಯದಲ್ಲಿ, ಅವನು ಸಾಯದಂತೆ ಅವನ ಶಬ್ದವು ಕೇಳಿಸಬೇಕು.</verse>
				<verse number="36">“ಶುದ್ಧ ಬಂಗಾರದ ತಗಡನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ, ಅದರಲ್ಲಿ ಹೀಗೆ ಕೆತ್ತಬೇಕು: ‘ಯೆಹೋವ ದೇವರಿಗೆ ಪರಿಶುದ್ಧ.’</verse>
				<verse number="37">ಅದು ಮುಂಡಾಸದ ಮುಂಭಾಗದಲ್ಲಿರುವಂತೆ ಅದನ್ನು ನೀಲಿ ದಾರಿನಿಂದ ಕಟ್ಟಬೇಕು.</verse>
				<verse number="38">ಇಸ್ರಾಯೇಲರು ತಮ್ಮ ಪರಿಶುದ್ಧ ದಾನಗಳನ್ನೆಲ್ಲಾ ಪರಿಶುದ್ಧ ಮಾಡುವ ಪರಿಶುದ್ಧ ಕಾರ್ಯಗಳ ದೋಷವನ್ನು ಆರೋನನು ಹೊರುವ ಹಾಗೆ ಅದು ಆರೋನನ ಹಣೆಯ ಮೇಲಿರಬೇಕು. ಯೆಹೋವ ದೇವರ ಮುಂದೆ ಅವುಗಳೆಲ್ಲಾ ಅಂಗೀಕಾರವಾಗುವ ಹಾಗೆ ಅದು ಯಾವಾಗಲೂ ಅವನ ಹಣೆಯ ಮೇಲೆ ಇರಬೇಕು.</verse>
				<verse number="39">“ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸದಿಂದ ಮಾಡಿದ ಮೇಲಂಗಿಯನ್ನೂ ನಯವಾದ ನಾರಿನಿಂದ ಮಾಡಿದ ಮುಂಡಾಸವನ್ನೂ ಹೆಣಿಗೆಯ ಕೆಲಸದಿಂದ ನಡುಕಟ್ಟನ್ನೂ ಮಾಡಿಸಬೇಕು.</verse>
				<verse number="40">ಆರೋನನ ಮಕ್ಕಳಿಗೆ ತಕ್ಕ ಗೌರವ ಹಾಗೂ ಶೋಭೆ ಸಿಗುವಂತೆ ನಿಲುವಂಗಿಗಳನ್ನೂ, ನಡುಕಟ್ಟುಗಳನ್ನೂ ಹಾಗೂ ಪೇಟಗಳನ್ನೂ ಮಾಡಿಸು.</verse>
				<verse number="41">ಅವುಗಳನ್ನು ನಿನ್ನ ಸಹೋದರ ಆರೋನನ ಮತ್ತು ಅವನ ಪುತ್ರರಿಗೆ ತೊಡಿಸಿ, ಅವರನ್ನು ಅಭಿಷೇಕಿಸಿ, ಪ್ರತಿಷ್ಠೆ ಮಾಡು. ಅವರು ನನಗೆ ಯಾಜಕ ಸೇವೆ ಮಾಡುವ ಹಾಗೆ ಅವರನ್ನು ಶುದ್ಧಮಾಡು.</verse>
				<verse number="42">“ಅವರ ಬೆತ್ತಲೆಯನ್ನು ಮುಚ್ಚುವ ಹಾಗೆ ನಾರಿನ ಚಡ್ಡಿಗಳನ್ನು ಮಾಡಿಸು. ಅವು ಸೊಂಟದಿಂದ ತೊಡೆಯವರೆಗೆ ಇರಬೇಕು.</verse>
				<verse number="43">ಆರೋನನೂ ಅವನ ಪುತ್ರರೂ ದೇವದರ್ಶನದ ಗುಡಾರಕ್ಕೆ ಬರುವ ಸಮಯದಲ್ಲಿಯೂ ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವುದಕ್ಕೆ ಬಲಿಪೀಠದ ಸಮೀಪಕ್ಕೆ ಬರುವ ಸಮಯದಲ್ಲಿಯೂ ದೋಷವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. “ಇದೇ ಆರೋನನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.</verse>
			</chapter>
			<chapter number="29">
				<verse number="1">“ಅವರು ನನಗೆ ಯಾಜಕ ಸೇವೆಮಾಡುವಂತೆ ನೀನು ಅವರನ್ನು ಶುದ್ಧ ಮಾಡಲು ಮಾಡಬೇಕಾದದ್ದೇನೆಂದರೆ: ದೋಷವಿಲ್ಲದ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ,</verse>
				<verse number="2">ಅತ್ಯುತ್ತಮ ಗೋಧಿಯ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನೂ ಎಣ್ಣೆ ಹೊಯ್ದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹಚ್ಚಿದ ಹುಳಿಯಿಲ್ಲದ ಪೂರಿಗಳನ್ನೂ ತೆಗೆದುಕೊಳ್ಳಬೇಕು.</verse>
				<verse number="3">ಇವುಗಳನ್ನು ಒಂದೇ ಬುಟ್ಟಿಯಲ್ಲಿ ಇಟ್ಟುಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತೆಗೆದುಕೊಂಡು ಬರಬೇಕು.</verse>
				<verse number="4">ಆರೋನನನ್ನೂ ಅವನ ಪುತ್ರರನ್ನೂ ದೇವದರ್ಶನದ ಗುಡಾರದ ಬಾಗಿಲಿನ ಬಳಿಗೆ ತಂದು, ನೀರಿನಲ್ಲಿ ಅವರನ್ನು ತೊಳೆಯಬೇಕು.</verse>
				<verse number="5">ತರುವಾಯ ಆ ವಸ್ತ್ರಗಳನ್ನು ತೆಗೆದುಕೊಂಡು ಆರೋನನಿಗೆ ಅಂಗಿಯನ್ನೂ ಏಫೋದಿನ ನಿಲುವಂಗಿಯನ್ನೂ ಏಫೋದನ್ನೂ ಎದೆಪದಕವನ್ನೂ ತೊಡಿಸಿ, ಏಫೋದಿನ ಕಲಾತ್ಮಕವಾದ ನಡುಕಟ್ಟಿನಿಂದ ಅವನ ನಡುವನ್ನೂ ಕಟ್ಟಿ,</verse>
				<verse number="6">ಅವನ ತಲೆಗೆ ಮುಂಡಾಸವನ್ನು ಇಟ್ಟು, ಮುಂಡಾಸದ ಮೇಲೆ ಪರಿಶುದ್ಧ ಪಟ್ಟವನ್ನು ಇಟ್ಟು,</verse>
				<verse number="7">ಅಭಿಷೇಕಿಸುವ ಎಣ್ಣೆಯನ್ನು ತೆಗೆದುಕೊಂಡು, ಅವನ ತಲೆಯ ಮೇಲೆ ಹೊಯ್ದು, ಅವನನ್ನು ಅಭಿಷೇಕಿಸಬೇಕು.</verse>
				<verse number="8">ನೀನು ಅವನ ಪುತ್ರರನ್ನು ಕರೆದುಕೊಂಡು ಬಂದು ಅವರಿಗೆ ನಿಲುವಂಗಿಗಳನ್ನು ತೊಡಿಸಿ,</verse>
				<verse number="9">ಆರೋನನಿಗೂ ಅವನ ಪುತ್ರರಿಗೂ ಮುಂಡಾಸುಗಳನ್ನು ಇಟ್ಟು ನಡುಕಟ್ಟುಗಳನ್ನು ಕಟ್ಟಬೇಕು, ಅವರಿಗೆ ಹೀಗೆ ಅವರಿಗೆ ಯಾಜಕತ್ವ ಸೇವೆಯು ಶಾಶ್ವತ ಕಟ್ಟಳೆಯಾಗಿರುವುದು. “ಈ ರೀತಿಯಾಗಿ ಆರೋನನನ್ನೂ ಅವನ ಪುತ್ರರನ್ನೂ ನೀನು ಪ್ರತಿಷ್ಠೆ ಮಾಡಬೇಕು.</verse>
				<verse number="10">“ಇದಲ್ಲದೆ ಆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಪುತ್ರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.</verse>
				<verse number="11">ತರುವಾಯ ನೀನು ಆ ಹೋರಿಯನ್ನು ಯೆಹೋವ ದೇವರ ಮುಂದೆ ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು.</verse>
				<verse number="12">ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಹಚ್ಚಿ, ರಕ್ತವನ್ನೆಲ್ಲಾ ಬಲಿಪೀಠದ ಅಡಿಯಲ್ಲಿ ಸುರಿಯಬೇಕು.</verse>
				<verse number="13">ನೀನು ಕರುಳುಗಳನ್ನೂ ಅವುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ತೆಗೆದುಕೊಂಡು ಬಲಿಪೀಠದ ಮೇಲೆ ಸುಡಬೇಕು.</verse>
				<verse number="14">ಇದಲ್ಲದೆ ಹೋರಿಯ ಮಾಂಸವನ್ನೂ ಅದರ ಚರ್ಮವನ್ನೂ, ಅದರ ಸಗಣಿಯನ್ನೂ ಪಾಳೆಯದ ಹೊರಗೆ ಬೆಂಕಿಯಿಂದ ಸುಡಬೇಕು. ಅದು ಪಾಪ ಪರಿಹಾರದ ಬಲಿಯಾಗಿದೆ.</verse>
				<verse number="15">“ನೀನು ಒಂದು ಟಗರನ್ನು ಸಹ ತೆಗೆದುಕೊಳ್ಳಬೇಕು. ಆರೋನನು ಮತ್ತು ಅವನ ಪುತ್ರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.</verse>
				<verse number="16">ತರುವಾಯ ಆ ಟಗರನ್ನು ನೀನು ವಧಿಸಿ, ಅದರ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಬೇಕು.</verse>
				<verse number="17">ಇದಲ್ಲದೆ ಆ ಟಗರನ್ನು ತುಂಡುತುಂಡಾಗಿ ಕಡಿದು, ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆದು, ಅದರ ತುಂಡುಗಳನ್ನು ತಲೆಯ ಸಂಗಡ ಇಡಬೇಕು.</verse>
				<verse number="18">ಅದನ್ನೆಲ್ಲಾ ಬಲಿಪೀಠದ ಮೇಲೆ ಸುಡಬೇಕು. ಅದು ಯೆಹೋವ ದೇವರಿಗೆ ದಹನಬಲಿಯಾಗಿದೆ. ಅದು ಯೆಹೋವ ದೇವರಿಗೆ ಸುವಾಸನೆಯ ದಹನಬಲಿ.</verse>
				<verse number="19">“ಆ ಇನ್ನೊಂದು ಟಗರನ್ನು ನೀನು ತಂದಾಗ, ಆರೋನನೂ ಅವನ ಪುತ್ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.</verse>
				<verse number="20">ತರುವಾಯ ನೀನು ಅದನ್ನು ವಧಿಸಿ, ಅದರ ರಕ್ತವನ್ನು ಆರೋನನ ಮತ್ತು ಅವನ ಪುತ್ರರ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿ, ಆ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.</verse>
				<verse number="21">ಆರೋನನೂ ಅವನ ವಸ್ತ್ರಗಳೂ ಅವನೊಂದಿಗೆ ಅವನ ಪುತ್ರರೂ ಅವರ ವಸ್ತ್ರಗಳೂ ಪರಿಶುದ್ಧವಾಗುವ ಹಾಗೆ ಬಲಿಪೀಠದ ಮೇಲಿರುವ ರಕ್ತವನ್ನೂ, ಅಭಿಷೇಕ ತೈಲವನ್ನೂ ತೆಗೆದುಕೊಂಡು ಆರೋನನ ಮೇಲೆಯೂ ಅವನ ವಸ್ತ್ರಗಳ ಮೇಲೆಯೂ ಅವನ ಪುತ್ರರ ಮೇಲೆಯೂ ಅವರ ವಸ್ತ್ರಗಳ ಮೇಲೆಯೂ ನೀನು ಚಿಮುಕಿಸಬೇಕು.</verse>
				<verse number="22">“ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲದೊಡೆಯನ್ನೂ ತೆಗೆದುಕೊಳ್ಳಬೇಕು. ಏಕೆಂದರೆ ಅದು ಪ್ರತಿಷ್ಠೆಯ ಟಗರು.</verse>
				<verse number="23">ಯೆಹೋವ ದೇವರ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿಯನ್ನೂ</verse>
				<verse number="24">ನೀನು ತೆಗೆದುಕೊಂಡು ಅವುಗಳನ್ನೆಲ್ಲಾ ಆರೋನನ ಮತ್ತು ಅವನ ಪುತ್ರರ ಕೈಗಳಿಗೆ ಕೊಟ್ಟು, ಅವರು ಯೆಹೋವ ದೇವರ ಮುಂದೆ ಅದನ್ನು ನೈವೇದ್ಯವಾಗಿ ನಿವಾಳಿಸಬೇಕು.</verse>
				<verse number="25">ನೀನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಬಲಿಪೀಠದ ಮೇಲೆ ದಹನಬಲಿಯಾಗಿ ಯೆಹೋವ ದೇವರ ಮುಂದೆ ಸುವಾಸನೆಗೋಸ್ಕರ ದಹಿಸಬೇಕು. ಅದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಅರ್ಪಣೆ.</verse>
				<verse number="26">ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು, ನೈವೇದ್ಯವಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನ್ನ ಪಾಲಾಗಿರುವುದು.</verse>
				<verse number="27">“ನೀನು ನೈವೇದ್ಯ ಮಾಡಿದ ಎದೆಯ ಭಾಗವನ್ನೂ, ಅರ್ಪಣೆ ಮಾಡಿದ ಬಲದ ಮುಂದೊಡೆಯನ್ನೂ, ಆರೋನನ, ಅವನ ಪುತ್ರರಿಗೆ ಸಲ್ಲಬೇಕಾದ ಪ್ರತಿಷ್ಠಿತ ಟಗರಿನ ಭಾಗವನ್ನು ಪ್ರತಿಷ್ಠಿಸು.</verse>
				<verse number="28">ಅದು ಆರೋನನಿಗೂ ಅವನ ಪುತ್ರರಿಗೂ ಇಸ್ರಾಯೇಲರ ಕಡೆಯಿಂದ ನಿತ್ಯವಾಗಿ ಕೊಡುವ ಭಾಗವಾಗಿರಬೇಕು. ಏಕೆಂದರೆ ಅದು ನೈವೇದ್ಯವಾಗಿದೆ. ಇಸ್ರಾಯೇಲರ ಸಮಾಧಾನದ ಬಲಿಗಳ ಅರ್ಪಣೆಗಳಿಂದ ಅವರು ಯೆಹೋವ ದೇವರಿಗೆ ನೈವೇದ್ಯ ಮಾಡುವಂಥದ್ದು ಆಗಿರಬೇಕು.</verse>
				<verse number="29">“ಇದಲ್ಲದೆ ಆರೋನನಿಗೆ ಇದ್ದ ಪರಿಶುದ್ಧ ವಸ್ತ್ರಗಳು ಅವನ ತರುವಾಯ ಅವನ ಪುತ್ರರಿಗೆ ಆಗಬೇಕು. ಅವರು ಅಭಿಷಿಕ್ತರಾಗಿ ಅವುಗಳನ್ನು ಧರಿಸಿಕೊಂಡು, ಪ್ರತಿಷ್ಠಿತರಾಗಬೇಕು.</verse>
				<verse number="30">ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡೆಸಿ, ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದ ದಿನದಿಂದ ಅವುಗಳನ್ನು ಏಳು ದಿನಗಳವರೆಗೆ ತೊಟ್ಟುಕೊಳ್ಳಬೇಕು.</verse>
				<verse number="31">“ಪ್ರತಿಷ್ಠೆಯ ಟಗರನ್ನು ತೆಗೆದುಕೊಂಡು ನೀನು ಅದರ ಮಾಂಸವನ್ನು ಪರಿಶುದ್ಧ ಸ್ಥಳದಲ್ಲಿ ಬೇಯಿಸಬೇಕು.</verse>
				<verse number="32">ಆರೋನನೂ ಅವನ ಪುತ್ರರೂ ಟಗರಿನ ಮಾಂಸವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಊಟಮಾಡಬೇಕು.</verse>
				<verse number="33">ಅವರನ್ನು ಪ್ರತಿಷ್ಠೆ ಮಾಡುವುದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವುದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿದವುಗಳನ್ನು ಅವರೇ ಊಟಮಾಡಬೇಕು. ಇತರರು ಅದನ್ನು ಉಣ್ಣಬಾರದು. ಏಕೆಂದರೆ ಅವು ಪರಿಶುದ್ಧವಾದವುಗಳು.</verse>
				<verse number="34">ಪ್ರತಿಷ್ಠೆ ಬಲಿ ಮಾಂಸದಲ್ಲಿಯೂ ರೊಟ್ಟಿಯಲ್ಲಿಯೂ ಮರುದಿನದವರೆಗೆ ಏನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಡಬೇಕು. ಅದು ಪರಿಶುದ್ಧವಾಗಿರುವುದರಿಂದ ಅದನ್ನು ಮರುದಿನ ತಿನ್ನಬಾರದು.</verse>
				<verse number="35">“ಹೀಗೆ ಆರೋನನಿಗೂ ಅವನ ಪುತ್ರಿರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರಮಾಡಿ, ಏಳು ದಿವಸ ಅವರನ್ನು ಪ್ರತಿಷ್ಠೆ ಕ್ರಮವನ್ನು ಮಾಡಬೇಕು.</verse>
				<verse number="36">ಪ್ರತಿದಿನ ದೋಷಪರಿಹಾರಕ್ಕಾಗಿ ಒಂದು ಹೋರಿಯನ್ನು ಯಜ್ಞ ಮಾಡಬೇಕು. ಬಲಿಪೀಠವನ್ನು ಶುದ್ಧಿಮಾಡುವುದಕ್ಕಾಗಿ ಅದರ ಮೇಲೆ ಪಾಪ ಪರಿಹಾರದ ಬಲಿಯನ್ನು ಸಮರ್ಪಿಸಿ, ಅದನ್ನು ದೇವರ ಸೇವೆಗಾಗಿ ಪ್ರತಿಷ್ಠಿಸುವುದಕ್ಕಾಗಿ ಅಭಿಷೇಕಿಸಬೇಕು.</verse>
				<verse number="37">ಏಳು ದಿವಸ ಬಲಿಪೀಠಕ್ಕೊಸ್ಕರ ಪ್ರಾಯಶ್ಚಿತ್ತ ಮಾಡಿ, ಅದನ್ನು ಪವಿತ್ರ ಮಾಡಬೇಕು. ಆಗ ಬಲಿಪೀಠವು ಅತಿ ಪರಿಶುದ್ಧವಾಗಿರುವುದು. ಬಲಿಪೀಠವನ್ನು ಮುಟ್ಟುವುದೆಲ್ಲಾ ಪವಿತ್ರವಾಗಿರಬೇಕು.</verse>
				<verse number="38">“ಬಲಿಪೀಠದ ಮೇಲೆ ನೀನು ಅರ್ಪಿಸಬೇಕಾದದ್ದು ಇದೇ: ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಟ್ಟುಬಿಡದೆ ದಹನಬಲಿಯಾಗಿ ಅರ್ಪಿಸಬೇಕು.</verse>
				<verse number="39">ಒಂದು ಕುರಿಮರಿಯನ್ನು ಮುಂಜಾನೆಯಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಸಮರ್ಪಿಸಬೇಕು.</verse>
				<verse number="40">ಒಂದು ಲೀಟರ್ ಕುಟ್ಟಿ ತೆಗೆದ ಓಲಿವ್ ಎಣ್ಣೆಯನ್ನು ಸುಮಾರು ಒಂದುವರೆ ಕಿಲೋಗ್ರಾಂ ಗೋಧಿಹಿಟ್ಟಿಗೆ ಬೆರೆಸಿ, ಒಂದು ಲೀಟರ್ ದ್ರಾಕ್ಷಾರಸವನ್ನು ಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಮೇತ ಹೋಮ ಮಾಡಬೇಕು.</verse>
				<verse number="41">ಇನ್ನೊಂದು ಕುರಿಮರಿಯನ್ನು ಸಂಜೆಯಲ್ಲಿ ಅರ್ಪಿಸಬೇಕು. ಬೆಳಿಗ್ಗೆ ಮಾಡಿದಂತೆಯೇ ಅದರ ಧಾನ್ಯ ಸಮರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಯೆಹೋವ ದೇವರಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು.</verse>
				<verse number="42">“ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ದೇವದರ್ಶನದ ಗುಡಾರದ ಮುಂದೆ ಯೆಹೋವ ದೇವರ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವುದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವುದು.</verse>
				<verse number="43">ಅಲ್ಲಿ ನಾನು ಇಸ್ರಾಯೇಲರನ್ನು ಸಂಧಿಸುವೆನು. ಅದು ನನ್ನ ಮಹಿಮೆಯಿಂದ ಪವಿತ್ರವಾಗುವುದು.</verse>
				<verse number="44">“ನಾನು ದೇವದರ್ಶನದ ಗುಡಾರವನ್ನೂ ಬಲಿಪೀಠವನ್ನೂ ಪರಿಶುದ್ಧ ಮಾಡುವೆನು. ಆರೋನನನ್ನೂ ಅವನ ಪುತ್ರರನ್ನೂ ನನಗೆ ಯಾಜಕ ಸೇವೆಮಾಡುವಂತೆ ಪವಿತ್ರ ಮಾಡುವೆನು.</verse>
				<verse number="45">ಇಸ್ರಾಯೇಲರ ಮಧ್ಯದಲ್ಲಿ ನಾನು ವಾಸಮಾಡಿ, ಅವರಿಗೆ ನಾನು ದೇವರಾಗಿರುವೆನು.</verse>
				<verse number="46">ಅವರ ಮಧ್ಯದಲ್ಲಿ ನಾನು ವಾಸವಾಗಿರುವದಕ್ಕಾಗಿ ಅವರನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ ಅವರ ದೇವರಾದ ಯೆಹೋವ ದೇವರು ನಾನೇ ಎಂದು ಅವರಿಗೆ ತಿಳಿಯುವುದು. ನಾನೇ ಅವರ ದೇವರಾದ ಯೆಹೋವ ದೇವರು.</verse>
			</chapter>
			<chapter number="30">
				<verse number="1">“ನೀನು ಜಾಲಿ ಮರದ ಕಟ್ಟಿಗೆಯಿಂದ ಧೂಪವೇದಿಯನ್ನು ಮಾಡಬೇಕು.</verse>
				<verse number="2">ಅದರ ಉದ್ದ ಮತ್ತು ಅಗಲ ಸುಮಾರು ನಲವತ್ತೈದು ಸೆಂಟಿಮೀಟರ್, ಅದರ ಎತ್ತರ ಸುಮಾರು ತೊಂಬತ್ತು ಸೆಂಟಿಮೀಟರ್ ಇದ್ದು, ಅದು ಚಚ್ಚೌಕವಾಗಿರಬೇಕು. ಅದರ ಕೊಂಬುಗಳನ್ನು ಸಹ ಜಾಲಿ ಮರದಿಂದಲೇ ಮಾಡಬೇಕು.</verse>
				<verse number="3">ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ, ಅದರ ಸುತ್ತಲೂ ಬಂಗಾರದ ಗೋಟನ್ನು ಮಾಡಬೇಕು.</verse>
				<verse number="4">ಅದರ ಗೋಟಿನ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡಬೇಕು. ಇವುಗಳನ್ನು ಹೊರುವುದಕ್ಕಾಗಿ ಅವುಗಳಲ್ಲಿ ಕೋಲುಗಳನ್ನು ಸಿಕ್ಕಿಸಬೇಕು.</verse>
				<verse number="5">ಆ ಕೋಲುಗಳನ್ನು ಜಾಲಿ ಮರದಿಂದ ಮಾಡಿ, ಅವುಗಳನ್ನು ಬಂಗಾರದಿಂದ ಹೊದಿಸಬೇಕು.</verse>
				<verse number="6">ಅದನ್ನು ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾಸನದ ಮುಂದೆಯೂ ಇಡಬೇಕು.</verse>
				<verse number="7">“ಅದರ ಮೇಲೆ ಆರೋನನು ಪರಿಮಳ ಧೂಪವನ್ನು ಸುಡಬೇಕು. ಪ್ರತಿದಿನ ಬೆಳಿಗ್ಗೆ ಸುಡಬೇಕು. ಪ್ರತಿದಿನ ಬೆಳಿಗ್ಗೆ ದೀಪಗಳನ್ನು ಸಿದ್ಧಮಾಡುವಾಗ ಅದನ್ನು ಸುಡಬೇಕು.</verse>
				<verse number="8">ಆರೋನನು ಸಂಜೆ ದೀಪಗಳನ್ನು ಹಚ್ಚುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಯೆಹೋವ ದೇವರ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪವು.</verse>
				<verse number="9">ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ, ದಹನಬಲಿಗಳನ್ನಾಗಲಿ, ಧಾನ್ಯಗಳ ಅರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು.</verse>
				<verse number="10">ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೆ ಒಂದು ಸಾರಿ ಪಾಪ ಪರಿಹಾರದ ಬಲಿಯ ರಕ್ತದಿಂದ ಅದರ ಕೊಂಬುಗಳಿಗೆ ಹಚ್ಚಿ ಪ್ರಾಯಶ್ಚಿತ್ತ ಮಾಡಬೇಕು. ಅದು ಯೆಹೋವ ದೇವರಿಗೆ ಮಹಾಪರಿಶುದ್ಧವಾದದ್ದು.”</verse>
				<verse number="11">ಆಗ ಯೆಹೋವ ದೇವರು ಪ್ರಕಟಪಡಿಸಿ ಮೋಶೆಗೆ,</verse>
				<verse number="12">“ನೀನು ಇಸ್ರಾಯೇಲರನ್ನು ಎಣಿಸಲು ಜನಗಣತಿಯನ್ನು ತೆಗೆದುಕೊಂಡಾಗ ಪ್ರತಿಯೊಬ್ಬನು ತನ್ನ ಜೀವನದ ವಿಮೋಚನೆಯ ಕ್ರಯವನ್ನು ಯೆಹೋವ ದೇವರಿಗೆ ಕೊಡಬೇಕು. ಈ ರೀತಿ ಮಾಡಿದಲ್ಲಿ ಅವರನ್ನು ಎಣಿಸುವಾಗ ಅವರಲ್ಲಿ ವ್ಯಾಧಿ ಉಂಟಾಗುವುದಿಲ್ಲ.</verse>
				<verse number="13">ಲೆಕ್ಕಿತರಾದವರಲ್ಲಿ ಸೇರುವ ಪ್ರತಿಯೊಬ್ಬ ಮನುಷ್ಯನು ಕೊಡಬೇಕಾದದ್ದು ಏನೆಂದರೆ ಶೆಕೆಲಿಗೆ ಇಪ್ಪತ್ತು ಗೇರಾಗಳ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರ್ಧ ಶೆಕೆಲ್ ಕೊಡಬೇಕು. ಅರ್ಧ ಶೆಕೆಲ್ ಯೆಹೋವ ದೇವರಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.</verse>
				<verse number="14">ಲೆಕ್ಕಿತರಾದವರಲ್ಲಿ ಇಪ್ಪತ್ತು ವರ್ಷದವರೂ ಅದಕ್ಕೂ ಹೆಚ್ಚು ಪ್ರಾಯವುಳ್ಳವರೂ ಯೆಹೋವ ದೇವರಿಗೆ ಕಾಣಿಕೆಯನ್ನು ಕೊಡಬೇಕು.</verse>
				<verse number="15">ನಿಮ್ಮ ಜೀವನದ ಪ್ರಾಯಶ್ಚಿತ್ತಕ್ಕೆ ಯೆಹೋವ ದೇವರಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವುದರಲ್ಲಿ ಐಶ್ವರ್ಯವಂತರು ಅರ್ಧ ಶೇಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು.</verse>
				<verse number="16">ಪ್ರಾಯಶ್ಚಿತ್ತದ ಹಣವನ್ನು ಇಸ್ರಾಯೇಲರಿಂದ ತೆಗೆದುಕೊಂಡು ದೇವದರ್ಶನದ ಗುಡಾರದ ಕೆಲಸಕ್ಕಾಗಿ ಪ್ರತ್ಯೇಕಿಸಬೇಕು. ಇದೇ ಯೆಹೋವ ದೇವರ ಮುಂದೆ ಇಸ್ರಾಯೇಲರಿಗೆ ಜ್ಞಾಪಕಾರ್ಥಕ್ಕಾಗಿಯೂ ಅವರ ಪ್ರಾಯಶ್ಚಿತ್ತಕ್ಕಾಗಿಯೂ ಇರುವುದು,” ಎಂದರು.</verse>
				<verse number="17">ಯೆಹೋವ ದೇವರು ಮೋಶೆಗೆ,</verse>
				<verse number="18">“ತೊಳೆದುಕೊಳ್ಳುವದಕ್ಕಾಗಿ ಕಂಚಿನ ಬೋಗುಣಿಯನ್ನು ಮಾಡಿಸಿ ಅದಕ್ಕೆ ಕಂಚಿನ ಪೀಠವನ್ನೂ ಮಾಡಿಸಿ, ಅದನ್ನು ದೇವದರ್ಶನದ ಗುಡಾರ ಮತ್ತು ಬಲಿಪೀಠದ ಮಧ್ಯದಲ್ಲಿಟ್ಟು, ಅದರಲ್ಲಿ ನೀರನ್ನು ತುಂಬಿಸಿಡಬೇಕು.</verse>
				<verse number="19">ಏಕೆಂದರೆ ಆರೋನನೂ ಅವನ ಪುತ್ರರೂ ಅದರಲ್ಲಿ ಕೈಕಾಲುಗಳನ್ನು ತೊಳೆಯಬೇಕು.</verse>
				<verse number="20">ಅವರು ದೇವದರ್ಶನದ ಗುಡಾರದಲ್ಲಿ ಪ್ರವೇಶಿಸುವಾಗ ಸೇವೆ ಮಾಡುವುದಕ್ಕೂ, ಬೆಂಕಿಯಿಂದ ಯೆಹೋವ ದೇವರಿಗೆ ದಹನಬಲಿಯನ್ನು ಅರ್ಪಿಸುವುದಕ್ಕೂ ಬಲಿಪೀಠದ ಬಳಿಗೆ ಬರುವಾಗ ಅವರು ಸಾಯದ ಹಾಗೆ ನೀರಿನಲ್ಲಿ ತೊಳೆದುಕೊಳ್ಳಬೇಕು.</verse>
				<verse number="21">ಅವರು ಸಾಯದ ಹಾಗೆ ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳಬೇಕು. ಇದೇ ಅವನಿಗೂ ಅವನ ಸಂತತಿಯವರಿಗೂ ತಲತಲಾಂತರಗಳಲ್ಲಿ ನಿತ್ಯವಾದ ಕಟ್ಟಳೆಯಾಗಿರಬೇಕು,” ಎಂದರು.</verse>
				<verse number="22">ಯೆಹೋವ ದೇವರು ಮೋಶೆಗೆ,</verse>
				<verse number="23">“ಉತ್ತಮವಾದ ತೈಲಗಳನ್ನು ಆರು ಕಿಲೋಗ್ರಾಂ ಸ್ವಚ್ಛವಾದ ರಕ್ತಬೋಳವು, ಇದರ ಅರ್ಧದಷ್ಟು ಮೂರು ಕಿಲೋಗ್ರಾಂ ಸುಗಂಧವಾದ ಲವಂಗಚಕ್ಕೆಯನ್ನು ಮತ್ತು ಮೂರು ಕಿಲೋಗ್ರಾಂ ಸುಗಂಧವಾದ ಬಜೆಯನ್ನು,</verse>
				<verse number="24">ಆರು ಕಿಲೋಗ್ರಾಂ ದಾಲ್ಚಿನ್ನಿಯನ್ನು ಪರಿಶುದ್ಧಸ್ಥಳದ ಅಳತೆಯ ಮೇರೆಗೆ ಇವುಗಳನ್ನು ನೀನು ತೆಗೆದುಕೊಳ್ಳಬೇಕು. ಸುಮಾರು ನಾಲ್ಕು ಲೀಟರಷ್ಟು ಓಲಿವ್ ಎಣ್ಣೆಯನ್ನು ಸಹ ತೆಗೆದುಕೊಂಡು,</verse>
				<verse number="25">ಅದರಿಂದ ಸುಗಂಧಕಾರನ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು. ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿರುವುದು.</verse>
				<verse number="26">ಅದರಿಂದ ಸಭೆಯ ಗುಡಾರವನ್ನೂ ಒಡಂಬಡಿಕೆಯ ಮಂಜೂಷವನ್ನೂ</verse>
				<verse number="27">ಮೇಜನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ದೀಪಸ್ತಂಭವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಧೂಪದ ವೇದಿಯನ್ನೂ</verse>
				<verse number="28">ದಹನಬಲಿಯ ಪೀಠವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಗಂಗಾಳವನ್ನೂ, ಅದರ ಕಾಲುಗಳನ್ನೂ ಅಭಿಷೇಕಿಸು.</verse>
				<verse number="29">ಅವು ಮಹಾಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವುದೆಲ್ಲವೂ ಪರಿಶುದ್ಧವಾಗಿರಬೇಕು.</verse>
				<verse number="30">“ಆರೋನನನ್ನೂ, ಅವನ ಪುತ್ರರನ್ನೂ ಅಭಿಷೇಕಿಸಿ, ಅವರು ನನಗೆ ಯಾಜಕ ಸೇವೆಮಾಡುವಂತೆ ಅವರನ್ನು ಪ್ರತಿಷ್ಠೆ ಮಾಡು, ಎಂದರು.</verse>
				<verse number="31">ನೀನು ಇಸ್ರಾಯೇಲರಿಗೆ: ‘ತಲತಲಾಂತರಗಳಲ್ಲಿ ಇದು ನನಗೆ ಪರಿಶುದ್ಧವಾದ ಅಭಿಷೇಕ ಎಣ್ಣೆಯಾಗಿರಬೇಕು.</verse>
				<verse number="32">ಇದನ್ನು ಮನುಷ್ಯರ ಮೇಲೆ ಹೊಯ್ಯಬಾರದು. ಇದರ ಮಾದರಿಯಂತೆ ಅಥವಾ ಇದಕ್ಕೆ ಸಮಾನವಾದದ್ದನ್ನು ಮಾಡಬಾರದು. ಇದು ಪರಿಶುದ್ಧವಾದದ್ದು. ನೀವು ಸಹ ಇದನ್ನು ಪರಿಶುದ್ಧವೆಂದು ತಿಳಿದುಕೊಳ್ಳಬೇಕು.</verse>
				<verse number="33">ಇದರ ಹಾಗೆ ತೈಲ ಮಾಡುವವನೂ ಯಾಜಕನಲ್ಲದವನ ಮೇಲೆ ಇದನ್ನು ಹಚ್ಚುವವನನ್ನು ಸ್ವಜನರೊಳಗಿಂದ ತೆಗೆದುಹಾಕಬೇಕು,’ ಎಂದು ಹೇಳು,” ಎಂದರು.</verse>
				<verse number="34">ಯೆಹೋವ ದೇವರು ಮೋಶೆಗೆ, “ನೀನು ಹಾಲು ಮಡ್ಡಿ, ಗುಗ್ಗಲ ಹಾಗೂ ಗಂಧದ ಚಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಮ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ.</verse>
				<verse number="35">ಅದನ್ನು ಸುಗಂಧ ತೈಲ ಮಾಡುವವರ ವಿದ್ಯೆಯ ಪ್ರಕಾರ ಬೆರಸಿ, ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡಬೇಕು.</verse>
				<verse number="36">ಅದರಲ್ಲಿ ಸ್ವಲ್ಪ ಪುಡಿಮಾಡಿ, ದೇವದರ್ಶನದ ಗುಡಾರದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇಡು. ಅದು ನಿಮಗೆ ಮಹಾಪರಿಶುದ್ಧವಾಗಿರಲಿ.</verse>
				<verse number="37">ನೀನು ಮಾಡುವ ಧೂಪದ ಮಾದರಿಯಂತೆ ನಿಮಗೋಸ್ಕರ ಮಾಡಿಕೊಳ್ಳಬಾರದು. ಅದನ್ನು ಯೆಹೋವ ದೇವರಿಗೆ ಪವಿತ್ರವೆಂದು ಪರಿಗಣಿಸಬೇಕು.</verse>
				<verse number="38">ಸುವಾಸನೆಗಾಗಿ ಅದನ್ನು ಮಾಡಿಕೊಳ್ಳುವವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”</verse>
			</chapter>
			<chapter number="31">
				<verse number="1">ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಅವನಿಗೆ,</verse>
				<verse number="2">“ನೋಡು, ನಾನು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲಯೇಲ್ ಎಂಬವನನ್ನು ಗುರುತಿಸಿ ನಾನು ಆರಿಸಿಕೊಂಡಿದ್ದೇನೆ.</verse>
				<verse number="3">ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕದಿಂದಲೂ ಎಲ್ಲಾ ವಿಧವಾದ ಕೌಶಲ್ಯದಿಂದಲೂ ತುಂಬಿಸಿದ್ದೇನೆ.</verse>
				<verse number="4">ಅವನು ಚಿನ್ನ, ಬೆಳ್ಳಿ, ಕಂಚಿನಲ್ಲಿ ಕಲಾತ್ಮಕವಾದ ವಿನ್ಯಾಸಗಳ ಕೆಲಸವನ್ನು ಮಾಡುವುದಕ್ಕೂ,</verse>
				<verse number="5">ರತ್ನಗಳಲ್ಲಿ ಕೆತ್ತನೆಯನ್ನೂ ಮರದಲ್ಲಿ ಕೆತ್ತನೆಯನ್ನೂ ಸಕಲ ವಿಧವಾದ ಕೌಶಲ್ಯದ ಕೆಲಸವನ್ನು ಬಲ್ಲವನಾಗಿರುವನು.</verse>
				<verse number="6">ಇಗೋ, ನಾನೇ ಅವನೊಂದಿಗೆ ದಾನನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನನ್ನು ನೇಮಿಸಿದ್ದೇನೆ. “ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡುವುದಕ್ಕೆ ಜಾಣರಾದವರೆಲ್ಲರ ಹೃದಯಗಳಲ್ಲಿ ಯಾವ ಕೆಲಸವನ್ನಾದರೂ ಕಲ್ಪಿಸಿ ಮಾಡುವದಕ್ಕೆ ಜ್ಞಾನವನ್ನು ಅನುಗ್ರಹಿಸಿದ್ದೇನೆ.</verse>
				<verse number="7">“ದೇವದರ್ಶನದ ಗುಡಾರ, ಒಡಂಬಡಿಕೆಯ ಮಂಜೂಷ, ಅದರ ಮೇಲಿರುವ ಕರುಣಾಸನ, ಗುಡಾರದ ಎಲ್ಲಾ ಉಪಕರಣಗಳು,</verse>
				<verse number="8">ಮೇಜು ಅದರ ಉಪಕರಣಗಳು, ಶುದ್ಧ ಬಂಗಾರದ ದೀಪಸ್ತಂಭ, ಅದರ ಎಲ್ಲಾ ಉಪಕರಣಗಳು, ಧೂಪವೇದಿ, ಬಲಿಪೀಠ,</verse>
				<verse number="9">ದಹನಬಲಿಪೀಠದ ಎಲ್ಲಾ ಉಪಕರಣಗಳು, ಗಂಗಾಳ, ಅದರ ಕಾಲು,</verse>
				<verse number="10">ಯಾಜಕನಾದ ಆರೋನನ ಕಲಾತ್ಮಕವಾಗಿ ನೇಯ್ದ ಸೇವಾವಸ್ತ್ರಗಳು, ಪರಿಶುದ್ಧ ವಸ್ತ್ರಗಳು, ಯಾಜಕನ ಕೆಲಸ ಮಾಡುವುದಕ್ಕೆ ಅವನ ಮಕ್ಕಳ ವಸ್ತ್ರಗಳು,</verse>
				<verse number="11">ಅಭಿಷೇಕಿಸುವ ತೈಲ, ಪರಿಶುದ್ಧ ಸ್ಥಳಕ್ಕೋಸ್ಕರವಿರುವ ಪರಿಮಳ ಧೂಪ. “ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು,” ಎಂದರು.</verse>
				<verse number="12">ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,</verse>
				<verse number="13">“ನೀನು ಇಸ್ರಾಯೇಲರೊಂದಿಗೆ ಮಾತನಾಡಿ, ‘ನಿಶ್ಚಯವಾಗಿ ನೀವು ನನ್ನ ವಿಶ್ರಾಂತಿಯ ದಿನವನ್ನು ಕೈಗೊಳ್ಳಬೇಕು. ಏಕೆಂದರೆ ನಿಮ್ಮನ್ನು ಪರಿಶುದ್ಧ ಮಾಡುವ ಯೆಹೋವ ದೇವರು ನಾನೇ ಎಂದು ನೀವು ತಿಳಿಯುವಂತೆ ಇದೇ ನನಗೂ, ನಿಮಗೂ, ನಿಮ್ಮ ಸಂತತಿಯವರಿಗೂ ಗುರುತಾಗಿರುವುದು.</verse>
				<verse number="14">“ ‘ಹೀಗಿರುವುದರಿಂದ ನೀವು ಸಬ್ಬತ್ ದಿನವನ್ನು ಕೈಗೊಳ್ಳಬೇಕು. ಏಕೆಂದರೆ ಅದು ನಿಮಗೆ ಪರಿಶುದ್ಧವಾದದ್ದು. ಅದನ್ನು ಅಪವಿತ್ರ ಮಾಡುವ ಪ್ರತಿಯೊಬ್ಬನು ಸಾಯಲೇಬೇಕು. ಆ ದಿನದಲ್ಲಿ ಯಾರಾದರೂ ಕೆಲಸ ಮಾಡಿದರೆ, ಅವರನ್ನು ನಿಮ್ಮ ಜನರೊಳಗಿಂದ ತೆಗೆದುಹಾಕಬೇಕು.</verse>
				<verse number="15">ಆರು ದಿವಸ ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ಯೆಹೋವ ದೇವರಿಗೆ ಪರಿಶುದ್ಧವಾದ ಸಬ್ಬತ್ ದಿನ. ಆ ಸಬ್ಬತ್ ದಿನದಲ್ಲಿ ಕೆಲಸ ಮಾಡುವವರೆಲ್ಲಾ ಸಾಯಲೇಬೇಕು.</verse>
				<verse number="16">ಹೀಗಿರಲಾಗಿ ಇಸ್ರಾಯೇಲರು ತಮ್ಮ ತಲತಲಾಂತರಗಳಲ್ಲಿ ನಿತ್ಯ ಒಡಂಬಡಿಕೆಯಾಗಿ ಆಚರಿಸುವಂತೆ ಸಬ್ಬತ್ ದಿನವನ್ನು ಕೈಗೊಳ್ಳಬೇಕು.</verse>
				<verse number="17">ನನಗೂ, ಇಸ್ರಾಯೇಲರಿಗೂ ಇದೇ ಶಾಶ್ವತವಾದ ಗುರುತು. ಏಕೆಂದರೆ ಆರು ದಿವಸಗಳಲ್ಲಿ ಯೆಹೋವ ದೇವರು ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸ ನಿಲ್ಲಿಸಿ, ವಿಶ್ರಮಿಸಿಕೊಂಡರು ಎಂದು ಹೇಳು,’ ” ಎಂದರು.</verse>
				<verse number="18">ಯೆಹೋವ ದೇವರು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ, ಅವನಿಗೆ ಸಾಕ್ಷಿಯ ಎರಡು ಹಲಗೆಗಳನ್ನೂ ದೇವರು ಬೆರಳಿನಿಂದ ಬರೆದ ಕಲ್ಲಿನ ಹಲಗೆಗಳನ್ನೂ ಕೊಟ್ಟನು.</verse>
			</chapter>
			<chapter number="32">
				<verse number="1">ಮೋಶೆಯು ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಾಯೇಲರು ನೋಡಿದಾಗ, ಅವರು ಆರೋನನ ಬಳಿಗೆ ಕೂಡಿಬಂದು ಅವನಿಗೆ, “ನೀನು ಎದ್ದು ನಮ್ಮನ್ನು ಮುನ್ನಡೆಸಿಕೊಂಡು ಹೋಗುವ ದೇವರುಗಳನ್ನು ನಮಗಾಗಿ ಮಾಡು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದ ಮನುಷ್ಯನಾದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು,” ಎಂದರು.</verse>
				<verse number="2">ಅದಕ್ಕೆ ಆರೋನನು ಅವರಿಗೆ, “ನಿಮ್ಮ ಹೆಂಡತಿಯರ ಮತ್ತು ನಿಮ್ಮ ಪುತ್ರಪುತ್ರಿಯರ ಕಿವಿಗಳಲ್ಲಿರುವ ಚಿನ್ನದ ವಾಲೆಗಳನ್ನು ಬಿಚ್ಚಿ ನನ್ನ ಬಳಿಗೆ ತನ್ನಿರಿ,” ಎಂದನು.</verse>
				<verse number="3">ಆಗ ಜನರೆಲ್ಲರೂ ತಮ್ಮ ಕಿವಿಗಳಲ್ಲಿದ್ದ ಚಿನ್ನದ ವಾಲೆಗಳನ್ನು ಕಿತ್ತು ಆರೋನನ ಬಳಿಗೆ ತಂದರು.</verse>
				<verse number="4">ಅವನು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಉಳಿಯಿಂದ ರೂಪಿಸಿ, ಎರಕ ಹೊಯ್ದು, ಕರುವಾಗಿ ಮಾಡಿದನು. ಆಗ ಅವರು, “ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿನಿಂದ ಬರಮಾಡಿದ ನಿಮ್ಮ ದೇವರುಗಳು ಇವೇ,” ಎಂದರು.</verse>
				<verse number="5">ಆರೋನನು ಅದನ್ನು ನೋಡಿ ಅದರ ಮುಂದೆ ಬಲಿಪೀಠವನ್ನು ಕಟ್ಟಿದನು. “ನಾಳೆ ಯೆಹೋವ ದೇವರಿಗೆ ಹಬ್ಬ,” ಎಂದು ಪ್ರಕಟಿಸಿದನು.</verse>
				<verse number="6">ಮರುದಿನ ಬೆಳಿಗ್ಗೆ ಜನರು ಎದ್ದು, ದಹನಬಲಿಗಳನ್ನೂ, ಸಮಾಧಾನ ಬಲಿಗಳನ್ನೂ ಸಮರ್ಪಿಸಿದರು. ಬಳಿಕ ತಿನ್ನಲೂ ಕುಡಿಯಲೂ ಕುಳಿತುಕೊಂಡರು, ಆಮೇಲೆ ಎದ್ದು ಕುಣಿದಾಡಿದರು.</verse>
				<verse number="7">ಆಗ ಯೆಹೋವ ದೇವರು ಮೋಶೆಗೆ, “ನೀನು ಇಳಿದು ಹೋಗು ಏಕೆಂದರೆ ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.</verse>
				<verse number="8">ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು, ತಮಗೆ ಎರಕ ಹೊಯ್ದ ಕರುವನ್ನು ಮಾಡಿಕೊಂಡು, ಅದನ್ನು ಆರಾಧಿಸುತ್ತಾ, ಅದಕ್ಕೆ ಬಲಿ ಅರ್ಪಿಸಿ, ‘ಇಸ್ರಾಯೇಲರೇ, ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರುಗಳು ಇವುಗಳೇ,’ ಎಂದು ಹೇಳುತ್ತಿದ್ದಾರೆ.”</verse>
				<verse number="9">ಇದಲ್ಲದೆ ಯೆಹೋವ ದೇವರು ಮೋಶೆಗೆ, “ನಾನು ಈ ಜನರನ್ನು ನೋಡಿದ್ದೇನೆ. ಇವರು ಹಟಮಾರಿ ಜನರೇ,</verse>
				<verse number="10">ಹೀಗಿರುವುದರಿಂದ ನನ್ನ ಕೋಪಾಗ್ನಿಯು ಅವರ ಮೇಲೆ ಉರಿದು ಅವರನ್ನು ದಹಿಸಿಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು,” ಎಂದರು.</verse>
				<verse number="11">ಅದಕ್ಕೆ ಮೋಶೆ, ತನ್ನ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನೆಂದರೆ, “ಯೆಹೋವ ದೇವರೇ, ನೀವು ಮಹಾಶಕ್ತಿಯಿಂದಲೂ, ಬಲವುಳ್ಳ ಕೈಯಿಂದಲೂ ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ ನಿಮ್ಮ ಜನರ ಮೇಲೆ ಏಕೆ ನಿಮ್ಮ ಕೋಪವು ಉರಿಯುವುದು?</verse>
				<verse number="12">‘ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಸಾಯಿಸಿ, ಭೂಮಿಯ ಮೇಲಿನಿಂದ ಅವರನ್ನು ಅಳಿಸಿಬಿಡುವುದಕ್ಕೂ, ದೇವರು ಅವರನ್ನು ಹೊರಗೆ ಬರಮಾಡಿದ್ದಾರೆ,’ ಎಂದು ಈಜಿಪ್ಟಿನವರು ಏಕೆ ಹೇಳಬೇಕು? ತಾವು ಕೋಪಾಗ್ನಿಯನ್ನು ಬಿಟ್ಟು ತಿರುಗಿಕೊಳ್ಳಿ. ನಿಮ್ಮ ಜನರಿಗೆ ವಿರೋಧವಾದ ಈ ಕೇಡಿನ ವಿಷಯದಲ್ಲಿ ತಮ್ಮ ಮನಸ್ಸನ್ನು ಬದಲಾಯಿಸಿರಿ.</verse>
				<verse number="13">ಆ ನಿಮ್ಮ ಸೇವಕರಾದ ಅಬ್ರಹಾಮನನ್ನೂ, ಇಸಾಕನನ್ನೂ, ಇಸ್ರಾಯೇಲನನ್ನೂ ಜ್ಞಾಪಕಮಾಡಿಕೊಳ್ಳಿರಿ, ಯಾರಿಗೆ ನೀವು ಆಣೆಯಿಟ್ಟು ಪ್ರಮಾಣಮಾಡಿ: ‘ಆಕಾಶದ ನಕ್ಷತ್ರಗಳ ಹಾಗೆ ನಿನ್ನ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯವರಿಗೆ ಕೊಡುವೆನು ಮತ್ತು ಅವರು ನಿತ್ಯವಾಗಿ ಸ್ವಾಧೀನವಾಗಿಟ್ಟುಕೊಳ್ಳುವರು’ ಎಂದು ಮಾತುಕೊಡಲಿಲ್ಲವೆ?” ಎಂದನು.</verse>
				<verse number="14">ಆಗ ಯೆಹೋವ ದೇವರು ತಮ್ಮ ಜನರಿಗೆ ಮಾಡುವೆನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಮಾರ್ಪಡಿಸಿಕೊಂಡರು.</verse>
				<verse number="15">ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದು ಬಂದನು. ಆ ಹಲಗೆಗಳ ಎರಡೂ ಬದಿಗಳಲ್ಲಿ ಅಂದರೆ ಈ ಕಡೆಯಲ್ಲಿಯೂ ಮತ್ತು ಆ ಕಡೆಯಲ್ಲಿಯೂ ಬರಹವಿತ್ತು.</verse>
				<verse number="16">ಆ ಹಲಗೆಗಳು ದೇವರ ಕೆಲಸಗಳಾಗಿದ್ದವು. ಆ ಹಲಗೆಗಳ ಮೇಲೆ ಕೆತ್ತಿದ ಬರಹವು ದೇವರದ್ದೇ ಆಗಿತ್ತು.</verse>
				<verse number="17">ಯೆಹೋಶುವನು ಜನರು ಕೂಗುತ್ತಿದ್ದ ಶಬ್ದವನ್ನು ಕೇಳಿ ಮೋಶೆಗೆ, “ಪಾಳೆಯದ ಕಡೆಯಿಂದ ಯುದ್ಧದ ಶಬ್ದವು ಕೇಳಿಸುತ್ತದೆ,” ಎಂದು ಹೇಳಿದನು.</verse>
				<verse number="18">ಅದಕ್ಕೆ ಮೋಶೆಯು ಹೀಗೆ ಉತ್ತರಿಸಿದನು: “ಅದು ಜಯಧ್ವನಿಯು ಅಲ್ಲ, ಅಪಜಯದ ಧ್ವನಿಯೂ ಅಲ್ಲ. ಆದರೆ ನನಗೆ ಹಾಡುವ ಧ್ವನಿಯು ಕೇಳಿಸುತ್ತಿದೆ.”</verse>
				<verse number="19">ಇದಾದ ಮೇಲೆ ಮೋಶೆ ಪಾಳೆಯದ ಸಮೀಪಕ್ಕೆ ಬಂದು ಆ ಕರುವನ್ನೂ, ಅವರ ಕುಣಿದಾಟವನ್ನೂ ನೋಡಿದಾಗ, ಮೋಶೆಯು ಕೋಪಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬೆಟ್ಟದ ಅಡಿಯಲ್ಲಿ ಬಿಸಾಡಿ ಅವುಗಳನ್ನು ಒಡೆದುಬಿಟ್ಟನು.</verse>
				<verse number="20">ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು, ಅದನ್ನು ಬೆಂಕಿಯಿಂದ ಸುಟ್ಟು ಪುಡಿಯಾಗುವವರೆಗೆ ಅರೆದು ನೀರಿನ ಮೇಲೆ ಚೆಲ್ಲಿ, ಆ ನೀರನ್ನು ಇಸ್ರಾಯೇಲರು ಕುಡಿಯುವಂತೆ ಮಾಡಿದನು.</verse>
				<verse number="21">ಮೋಶೆಯು ಆರೋನನಿಗೆ, “ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು?” ಎಂದು ಕೇಳಿದನು.</verse>
				<verse number="22">ಅದಕ್ಕೆ ಆರೋನನು, “ನನ್ನ ಒಡೆಯನೇ ಕೋಪಗೊಳ್ಳಬೇಡಿ ಈ ಜನರು ಕೆಡುಕಿನ ಮನಸ್ಸಿನವರಾಗಿದ್ದಾರೆಂದು ನೀವು ಬಲ್ಲಿರಿ.</verse>
				<verse number="23">ಅವರು ನನಗೆ, ‘ನಮ್ಮನ್ನು ಮುನ್ನಡೆಸಿಕೊಂಡು ಹೋಗುವ ದೇವರುಗಳನ್ನು ಮಾಡು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಮ್ಮನ್ನು ಬರಮಾಡಿದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು,’ ಎಂದು ಹೇಳಿದರು.</verse>
				<verse number="24">ಆದ್ದರಿಂದ ನಾನು ಅವರಿಗೆ, ‘ಚಿನ್ನ ಇದ್ದವರು ಅದನ್ನು ತರಲಿ,’ ಎಂದೆನು. ಅವರು ಅದನ್ನು ನನಗೆ ಕೊಟ್ಟರು. ಆಗ ನಾನು ಅದನ್ನು ಬೆಂಕಿಯಲ್ಲಿ ಹಾಕಿದಾಗ, ಈ ಕರುವು ಉಂಟಾಯಿತು,” ಎಂದನು.</verse>
				<verse number="25">ಮೋಶೆಯು ಜನರು ಕ್ರಮವಿಲ್ಲದಿರುವುದನ್ನು ಕಂಡನು. ಆರೋನನು ಅವರನ್ನು ಮಿತಿಮೀರಿ ಇಷ್ಟಬಂದಂತೆ ಮಾಡುವದಕ್ಕೆ ಅವಕಾಶ ಮಾಡಿಕೊಟ್ಟದ್ದರಿಂದ ಅವರ ವೈರಿಗಳ ಮುಂದೆ ಅಪಹಾಸ್ಯಕ್ಕೆ ಆಸ್ಪದವಾಯಿತು.</verse>
				<verse number="26">ಮೋಶೆಯು ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, “ಯೆಹೋವ ದೇವರ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಲಿ,” ಎಂದನು. ಆಗ ಲೇವಿಯರೆಲ್ಲರು ಅವನ ಬಳಿಗೆ ಕೂಡಿಬಂದರು.</verse>
				<verse number="27">ಆಗ ಅವನು ಅವರಿಗೆ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಪ್ರತಿಯೊಬ್ಬನು ತನ್ನ ಖಡ್ಗವನ್ನು ಪಕ್ಕದಲ್ಲಿ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಂದು ದ್ವಾರದಿಂದ ಇನ್ನೊಂದು ದ್ವಾರಕ್ಕೆ ಹೋಗಿ ಹೋಗುತ್ತಾ ಬರುತ್ತಾ ತನ್ನ ಸಹೋದರನನ್ನೂ, ತನ್ನ ಜೊತೆಗಾರನನ್ನೂ ಮತ್ತು ನೆರೆಹೊರೆಯವನೆಂದು ಲಕ್ಷಿಸದೆ ಕೊಲ್ಲಲಿ,’ ” ಎಂದು ಹೇಳಿದನು.</verse>
				<verse number="28">ಲೇವಿಯರು ಮೋಶೆಯು ಆಜ್ಞಾಪಿಸಿದಂತೆ ಮಾಡಿದರು. ಆ ದಿನ ಹೆಚ್ಚು ಕಡಿಮೆ ಮೂರು ಸಾವಿರ ಜನರು ಸತ್ತರು.</verse>
				<verse number="29">ಆಗ ಮೋಶೆ ಆ ಲೇವಿಯರಿಗೆ, “ಈ ದಿನ ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ, ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ, ನಿಮ್ಮನ್ನೇ ಯೆಹೋವ ದೇವರ ಸೇವೆಗೆ ಪ್ರತಿಷ್ಠಾಪಿಸಿಕೊಂಡಿದ್ದೀರಿ. ಆದ್ದರಿಂದ ಅವರು ಈ ದಿನ ನಿಮ್ಮನ್ನು ಆಶೀರ್ವದಿಸಿರುವರು,” ಎಂದು ಹೇಳಿದನು.</verse>
				<verse number="30">ಮರುದಿನದಲ್ಲಿ, ಮೋಶೆಯು ಜನರಿಗೆ, “ನೀವು ದೊಡ್ಡ ಪಾಪವನ್ನು ಮಾಡಿದ್ದೀರಿ. ಆದ್ದರಿಂದ ನಾನು ಈಗ ಬೆಟ್ಟವನ್ನು ಹತ್ತಿ ಯೆಹೋವ ದೇವರ ಬಳಿಗೆ ಹೋಗುವೆನು. ಒಂದು ವೇಳೆ ನಿಮ್ಮ ಪಾಪಕ್ಕಾಗಿ ನಾನು ಪ್ರಾಯಶ್ಚಿತ್ತ ಮಾಡಿಕೊಳ್ಳಬಹುದು,” ಎಂದನು.</verse>
				<verse number="31">ಹೀಗೆ ಮೋಶೆಯು ಯೆಹೋವ ದೇವರ ಬಳಿಗೆ ತಿರುಗಿ ಹೋಗಿ, “ಅಯ್ಯೋ, ಈ ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ.</verse>
				<verse number="32">ಆದರೂ ಈಗ ನೀವು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀವು ಬರೆದ ಗ್ರಂಥದಿಂದ ನನ್ನ ಹೆಸರನ್ನು ಅಳಿಸಿಬಿಡಿ,” ಎಂದು ಬೇಡಿಕೊಂಡನು.</verse>
				<verse number="33">ಅದಕ್ಕೆ ಯೆಹೋವ ದೇವರು ಮೋಶೆಗೆ, “ನನಗೆ ವಿರೋಧವಾಗಿ ಪಾಪಮಾಡಿದವನ ಹೆಸರನ್ನೇ ನಾನು ನನ್ನ ಪುಸ್ತಕದಿಂದ ಅಳಿಸಿಬಿಡುವೆನು.</verse>
				<verse number="34">ಆದರೆ ಈಗ ನೀನು ಹೋಗಿ, ಜನರನ್ನು ನಿನಗೆ ನಾನು ಹೇಳಿದ ಸ್ಥಳಕ್ಕೆ ಕರೆದುಕೊಂಡು ಹೋಗು. ಇಗೋ, ನನ್ನ ದೂತನು ನಿನ್ನನ್ನು ಮುನ್ನಡೆಸುವನು. ಆದರೂ ನಾನು ವಿಚಾರಿಸುವ ದಿನ ಬಂದಾಗ ಅವರ ಪಾಪಕ್ಕೆ ತಕ್ಕಂತೆ ಅವರನ್ನು ಶಿಕ್ಷಿಸುತ್ತೇನೆ,” ಎಂದರು.</verse>
				<verse number="35">ಹೀಗೆ ಆರೋನನು ಮಾಡಿದ ಕರುವನ್ನು ಅವರು ಆರಾಧಿಸಿದ್ದರಿಂದ ಯೆಹೋವ ದೇವರು ಜನರನ್ನು ಉಪದ್ರವದಿಂದ ಬಾಧಿಸಿದರು.</verse>
			</chapter>
			<chapter number="33">
				<verse number="1">ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಜನರ ಸಂಗಡ ಈ ಸ್ಥಳವನ್ನು ಬಿಟ್ಟು ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ, ‘ನಿಮ್ಮ ಸಂತತಿಯವರಿಗೆ ಅದನ್ನು ಕೊಡುವೆನು,’ ಎಂದು ಹೇಳಿ ಪ್ರಮಾಣ ಮಾಡಿದ ದೇಶಕ್ಕೆ ಹೋಗು.</verse>
				<verse number="2">ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ, ಅಮೋರಿಯರನ್ನೂ, ಹಿತ್ತಿಯರನ್ನೂ, ಪೆರಿಜೀಯರನ್ನೂ, ಹಿವ್ವಿಯರನ್ನೂ, ಯೆಬೂಸಿಯರನ್ನೂ ಹೊರದೂಡುವೆನು.</verse>
				<verse number="3">ಹಾಲೂ ಜೇನೂ ಹರಿಯುವ ದೇಶಕ್ಕೆ ಹೋಗು. ನಾನು ನಿಮ್ಮ ಸಂಗಡ ಹೋಗುವುದಿಲ್ಲ ಏಕೆಂದರೆ ನೀವು ಮಾತು ಕೇಳದ ಹಟಮಾರಿ ಜನರಾಗಿದ್ದೀರಿ ಮತ್ತು ಮಾರ್ಗದಲ್ಲಿ ನಾನು ನಿಮ್ಮನ್ನು ಸಂಹರಿಸಬೇಕಾಗಬಹುದು,” ಎಂದರು.</verse>
				<verse number="4">ಜನರು ಈ ಕಠಿಣವಾದ ಮಾತುಗಳನ್ನು ಕೇಳಿದಾಗ ದುಃಖಪಟ್ಟರು. ಯಾರೂ ತಮ್ಮ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.</verse>
				<verse number="5">ಏಕೆಂದರೆ ಯೆಹೋವ ದೇವರು ಮೋಶೆಗೆ, “ಇಸ್ರಾಯೇಲರಿಗೆ ಹೀಗೆ ಹೇಳು: ‘ನೀವು ಆಜ್ಞೆಗಳನ್ನು ಪಾಲಿಸದ ಹಟಮಾರಿ ಜನರು. ನಾನು ಕ್ಷಣಮಾತ್ರವೂ ನಿಮ್ಮೊಡನೆ ಬಂದರೆ ನೀವು ನಿರ್ಮೂಲವಾಗಿಬಿಡುವಿರಿ. ಹೀಗಿರುವುದರಿಂದ ಈಗ ನಿಮ್ಮ ಆಭರಣಗಳನ್ನು ನಿಮ್ಮಿಂದ ತೆಗೆದುಬಿಡಿರಿ, ನಾನು ನಿಮಗೆ ಏನು ಮಾಡಬೇಕೆಂಬುದನ್ನು ತೀರ್ಮಾನಿಸುವೆನು’ ಎಂದು ಹೇಳು,” ಎಂದು ತಿಳಿಸಿದರು.</verse>
				<verse number="6">ಅದರಂತೆಯೇ ಇಸ್ರಾಯೇಲರು ಹೋರೇಬ್ ಬೆಟ್ಟದ ಬಳಿಯಲ್ಲಿ ತಮ್ಮ ಆಭರಣಗಳನ್ನು ತೆಗೆದುಬಿಟ್ಟರು.</verse>
				<verse number="7">ಮೋಶೆಯು ಗುಡಾರವನ್ನು ತೆಗೆದು ಪಾಳೆಯದ ಹೊರಗೆ ಪಾಳೆಯಕ್ಕೆ ದೂರವಾಗಿ ಹಾಕಿ, ಅದಕ್ಕೆ “ದೇವದರ್ಶನದ ಗುಡಾರ” ಎಂದು ಹೆಸರಿಟ್ಟನು. ತರುವಾಯ ಯೆಹೋವ ದೇವರನ್ನು ಹುಡುಕುವವರೆಲ್ಲಾ ಪಾಳೆಯದ ಹೊರಗೆ ಇರುವ ದೇವದರ್ಶನದ ಗುಡಾರಕ್ಕೆ ಹೋದರು.</verse>
				<verse number="8">ಇದಾದ ಮೇಲೆ ಮೋಶೆಯು ಗುಡಾರದ ಬಳಿಗೆ ಹೊರಗೆ ಹೋಗುತ್ತಿರುವಾಗ ಜನರೆಲ್ಲರೂ ಎದ್ದು, ತಮ್ಮ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡು ಮೋಶೆಯು ಗುಡಾರದಲ್ಲಿ ಪ್ರವೇಶಿಸುವವರೆಗೆ ಅವನ ಹಿಂದೆ ನೋಡುತ್ತಿದ್ದರು.</verse>
				<verse number="9">ಮೋಶೆ ಗುಡಾರದೊಳಗೆ ಹೋಗುವಾಗ, ಮೇಘಸ್ತಂಭವು ಪ್ರವೇಶದ್ವಾರದ ಬಳಿಯಲ್ಲಿ ನಿಲ್ಲುತ್ತಿತ್ತು. ಆಗ ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡುತ್ತಿದ್ದರು.</verse>
				<verse number="10">ಜನರೆಲ್ಲರೂ ಗುಡಾರದ ಬಾಗಿಲಲ್ಲಿ ನಿಂತ ಮೇಘಸ್ತಂಭವನ್ನು ನೋಡುವಾಗ ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ಎದ್ದು ನಿಂತು ಯೆಹೋವ ದೇವರನ್ನು ಆರಾಧಿಸುತ್ತಿದ್ದರು.</verse>
				<verse number="11">ಒಬ್ಬ ಮನುಷ್ಯನು ತನ್ನ ಸ್ನೇಹಿತನ ಸಂಗಡ ಮಾತನಾಡುವಂತೆ ಯೆಹೋವ ದೇವರು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದರು. ತರುವಾಯ ಅವನು ಪಾಳೆಯಕ್ಕೆ ಹಿಂದಿರುಗಿ ಹೋಗುತ್ತಿದ್ದನು. ಆದರೆ ಅವನ ಸೇವಕನೂ ನೂನನ ಮಗನೂ ಆದ ಯೆಹೋಶುವನೆಂಬ ಯೌವನಸ್ಥನು ಗುಡಾರವನ್ನು ಬಿಟ್ಟುಹೋಗಲಿಲ್ಲ.</verse>
				<verse number="12">ಮೋಶೆಯು ಯೆಹೋವ ದೇವರಿಗೆ, “ ‘ಈ ಜನರನ್ನು ನಡೆಸಿಕೊಂಡು ಹೋಗು,’ ಎಂದು ನನಗೆ ಹೇಳುತ್ತಿರುವಿರಿ. ಯಾರನ್ನು ನನ್ನ ಸಂಗಡ ಕಳುಹಿಸುವಿರಿ, ಎಂದು ನೀವು ನನಗೆ ತಿಳಿಸಲಿಲ್ಲ. ಆದರೂ ನೀವು ನನಗೆ, ‘ನಾನು ನಿನ್ನನ್ನು ನಿನ್ನ ಹೆಸರಿನ ಮೂಲಕ ತಿಳಿದಿದ್ದೇನೆ, ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರೆಯಿತು,’ ಎಂದೂ ಹೇಳಿದ್ದೀರಲ್ಲಾ.</verse>
				<verse number="13">ಹಾಗಾದರೆ ಈಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆಕಿದ್ದೇ ಆದರೆ ನಾನು ನಿಮ್ಮನ್ನು ತಿಳಿಯುವ ಹಾಗೆ, ನಿಮ್ಮ ಮಾರ್ಗವನ್ನು ನನಗೆ ತೋರಿಸಿ. ಆಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದು. ಈ ಜನಾಂಗವು ನಿಮ್ಮ ಜನರೇ, ಎಂದು ಜ್ಞಾಪಿಸಿಕೊಳ್ಳುವೆನು,” ಎಂದು ಹೇಳಿದನು.</verse>
				<verse number="14">ಆಗ ಯೆಹೋವ ದೇವರು, “ನನ್ನ ಪ್ರಸನ್ನತೆಯು ನಿನ್ನ ಸಂಗಡ ಹೋಗುವುದು. ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು,” ಎಂದರು.</verse>
				<verse number="15">ಮೋಶೆಯು ಅವರಿಗೆ, “ನಿಮ್ಮ ಪ್ರಸನ್ನತೆಯು ನಮ್ಮೊಂದಿಗೆ ಹೋಗದಿದ್ದರೆ ನಮ್ಮನ್ನು ಇಲ್ಲಿಂದ ಕರೆದುಕೊಂಡು ಹೋಗಬೇಡಿ.</verse>
				<verse number="16">ಏಕೆಂದರೆ ನನಗೂ ನಿಮ್ಮ ಜನರಿಗೂ ನಿಮ್ಮ ದೃಷ್ಟಿಯಲ್ಲಿ ದಯೆ ದೊರಕಿತೆಂದು ಯಾವುದರಿಂದ ತಿಳಿದುಬರುವುದು? ನೀವು ನನ್ನೊಂದಿಗೆ ಹೋಗುವುದರಿಂದಲ್ಲವೋ? ಹೀಗೆ ನಾನೂ ನಿಮ್ಮ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕವಾಗಿರುವೆವು,” ಎಂದನು.</verse>
				<verse number="17">ಅದಕ್ಕೆ ಯೆಹೋವ ದೇವರು ಮೋಶೆಗೆ, “ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ಏಕೆಂದರೆ ನನ್ನ ದೃಷ್ಟಿಯಲ್ಲಿ ನಿನಗೆ ದಯೆ ದೊರಕಿತು. ನಾನು ನಿನ್ನನ್ನು ನಿನ್ನ ಹೆಸರಿನಿಂದ ತಿಳಿದಿದ್ದೇನೆ,” ಎಂದರು.</verse>
				<verse number="18">ಆಗ ಮೋಶೆ, “ನಿಮ್ಮ ಮಹಿಮೆಯನ್ನು ನನಗೆ ತೋರಿಸಿ ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದನು.</verse>
				<verse number="19">ಅದಕ್ಕೆ ಅವರು, “ನಾನು ನನ್ನ ಒಳ್ಳೆಯತನವನ್ನೆಲ್ಲಾ ನಿನ್ನ ಎದುರಿಗೆ ಹಾದು ಹೋಗ ಮಾಡಿ, ಯೆಹೋವ ದೇವರ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ, ಯಾವನ ಮೇಲೆ ನನ್ನ ಕರುಣೆ ಉಂಟೋ, ಅವನನ್ನು ಕರುಣಿಸುವೆನು. ಯಾವನ ಮೇಲೆ ನನ್ನ ಕನಿಕರವಿದೆಯೋ ಅವನನ್ನು ಕನಿಕರಿಸುವೆನು,” ಎಂದರು.</verse>
				<verse number="20">ಮತ್ತೆ ದೇವರು ಮೋಶೆಗೆ, “ನೀನು ನನ್ನ ಮುಖವನ್ನು ನೋಡಲಾರಿ. ಏಕೆಂದರೆ ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕಿರಲಾರನು,” ಎಂದರು.</verse>
				<verse number="21">ಇದಲ್ಲದೆ ಯೆಹೋವ ದೇವರು, “ನನ್ನ ಬಳಿಯಲ್ಲಿ ಒಂದು ಸ್ಥಳವಿದೆ. ನೀನು ಬಂಡೆಯ ಮೇಲೆ ನಿಂತುಕೋ.</verse>
				<verse number="22">ಆಗ ನನ್ನ ಮಹಿಮೆಯು ಹಾದುಹೋಗುವಾಗ, ನಿನ್ನನ್ನು ಬಂಡೆಯ ಬಿರುಕಿನಲ್ಲಿ ನಿಲ್ಲಿಸಿ, ನಿನ್ನ ಮೇಲೆ ನನ್ನ ಕೈ ಮುಚ್ಚುವೆನು.</verse>
				<verse number="23">ತರುವಾಯ ನನ್ನ ಕೈಯನ್ನು ತೆಗೆದುಬಿಡುವೆನು. ಆಗ ನೀನು ನನ್ನ ಬೆನ್ನನ್ನು ನೋಡುವೆ, ಆದರೆ ನನ್ನ ಮುಖವು ನಿನಗೆ ಕಾಣಿಸುವುದಿಲ್ಲ,” ಎಂದರು.</verse>
			</chapter>
			<chapter number="34">
				<verse number="1">ಯೆಹೋವ ದೇವರು ಮೋಶೆಗೆ, “ಮೊದಲಿನವುಗಳ ಹಾಗೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೋ. ಆಗ ನೀನು ಒಡೆದ ಆ ಮೊದಲನೆಯ ಹಲಗೆಗಳ ಮೇಲೆ ಇದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.</verse>
				<verse number="2">ಬೆಳಿಗ್ಗೆ ನೀನು ಸಿದ್ಧನಾಗಿ ಸೀನಾಯಿ ಬೆಟ್ಟವನ್ನೇರಿ, ಆ ಬೆಟ್ಟದ ತುದಿಯ ಮೇಲೆ ನನ್ನ ಸನ್ನಿಧಿಯಲ್ಲಿ ನಿಂತಿರಬೇಕು.</verse>
				<verse number="3">ಆದರೆ ಯಾರೂ ನಿನ್ನ ಸಂಗಡ ಮೇಲಕ್ಕೆ ಬರಬಾರದು. ಬೆಟ್ಟದ ಮೇಲೆ ಎಲ್ಲಿಯೂ ಯಾರೂ ಕಾಣಿಸಬಾರದು, ಆ ಬೆಟ್ಟದ ಎದುರಿನಲ್ಲಿ ದನಕುರಿಗಳು ಸಹ ಮೇಯಬಾರದು,” ಎಂದು ಹೇಳಿದರು.</verse>
				<verse number="4">ಆಗ ಮೋಶೆಯು ಮೊದಲಿನವುಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೊಂಡನು. ಬೆಳಿಗ್ಗೆ ಎದ್ದು ಯೆಹೋವ ದೇವರು ತನಗೆ ಆಜ್ಞಾಪಿಸಿದಂತೆ ಕಲ್ಲಿನ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟದ ಮೇಲೆ ಹೋದನು.</verse>
				<verse number="5">ಆಗ ಯೆಹೋವ ದೇವರು ಮೇಘದಲ್ಲಿ ಇಳಿದುಬಂದು ಅಲ್ಲಿ ಅವನ ಸಂಗಡ ನಿಂತುಕೊಂಡು, ಯೆಹೋವ ದೇವರು ತಮ್ಮ ಹೆಸರನ್ನು ಪ್ರಕಟಮಾಡಿದರು.</verse>
				<verse number="6">ಯೆಹೋವ ದೇವರು ಅವನೆದುರಿಗೆ ಹಾದು ಹೋಗಿ, “ಯೆಹೋವ ದೇವರು, ಯೆಹೋವ ದೇವರು, ಕರುಣಾಳುವು, ಕೃಪಾಳುವು, ದೀರ್ಘಶಾಂತನು, ಮಹಾ ಪ್ರೀತಿಯುಳ್ಳವನು ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ</verse>
				<verse number="7">ಸಾವಿರ ತಲೆಗಳವರೆಗೂ ಕರುಣೆ ತೋರಿಸುವಾತನು. ದೋಷವನ್ನು, ಅಪರಾಧವನ್ನು, ಪಾಪವನ್ನು ಕ್ಷಮಿಸುವಾತನು ಆದರೂ ಅಪರಾಧಿಯನ್ನು ಶಿಕ್ಷಿಸದೆ ಬಿಡದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆಗಳವರೆಗೂ ಶಿಕ್ಷಿಸುವಾತನು,” ಎಂದು ಪ್ರಕಟಿಸಿಕೊಂಡರು.</verse>
				<verse number="8">ಆಗ ಮೋಶೆಯು ತ್ವರೆಪಟ್ಟು ನೆಲಕ್ಕೆ ಬಾಗಿ ಅವರನ್ನು ಆರಾಧಿಸಿದನು.</verse>
				<verse number="9">ಅವನು, ಕರ್ತನೇ, “ಈಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ, ನನ್ನ ಕರ್ತನೇ ತಾವೇ ನಮ್ಮ ಸಂಗಡ ಬರಬೇಕು. ಇದು ಮಾತು ಕೇಳದ ಹಟಮಾರಿ ಜನಾಂಗವೇ ಹೌದು. ಆದರೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿಮ್ಮ ಸೊತ್ತಾಗಿ ತೆಗೆದುಕೊಳ್ಳಿ,” ಎಂದನು.</verse>
				<verse number="10">ಅದಕ್ಕೆ ಯೆಹೋವ ದೇವರು, “ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ಸಮಸ್ತ ಭೂಮಿಯಲ್ಲಿಯೂ ಯಾವ ಜನಾಂಗದಲ್ಲಿಯೂ ಹಿಂದೆಂದಿಗೂ ಮಾಡದಿರುವಂಥ ಅದ್ಭುತಗಳನ್ನು ನಿನ್ನ ಎಲ್ಲಾ ಜನರ ಮುಂದೆ ಮಾಡುವೆನು. ನೀನು ಯಾರ ಮಧ್ಯದಲ್ಲಿ ಇರುವೆಯೋ ಆ ಜನರೂ ಯೆಹೋವ ದೇವರ ಕಾರ್ಯವನ್ನು ನೋಡುವರು ಏಕೆಂದರೆ ನಾನು ನಿಮಗೆ ಮಾಡುವಂಥದ್ದು ಭಯಂಕರವಾಗಿರುವುದು.</verse>
				<verse number="11">ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವುದನ್ನು ಅನುಸರಿಸಿ ನಡೆಯಬೇಕು. ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ, ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿಮ್ಮ ಮುಂದೆಯೇ ಹೊರಡಿಸಿಬಿಡುತ್ತೇನೆ.</verse>
				<verse number="12">ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಪ್ಪಂದವನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವುದು.</verse>
				<verse number="13">ಆದರೆ ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.</verse>
				<verse number="14">ಏಕೆಂದರೆ, ‘ರೋಷವುಳ್ಳವನು,’ ಎಂದು ಹೆಸರುಳ್ಳ ಯೆಹೋವ ದೇವರು ರೋಷವುಳ್ಳ ದೇವರಾಗಿರುವುದರಿಂದ ನೀನು ಬೇರೆ ದೇವರುಗಳನ್ನು ಆರಾಧಿಸಬಾರದು.</verse>
				<verse number="15">“ನೀನು ಆ ದೇಶದ ನಿವಾಸಿಗಳ ಸಂಗಡ ಒಪ್ಪಂದ ಮಾಡಿಕೊಳ್ಳದಂತೆ ಎಚ್ಚರದಿಂದಿರು. ಅವರು ಅನ್ಯದೇವರುಗಳನ್ನು ಆರಾಧಿಸಿ, ಅವುಗಳಿಗೆ ಯಜ್ಞ ಅರ್ಪಿಸುವ ಸಮಯದಲ್ಲಿ ಒಬ್ಬನು ನಿನ್ನನ್ನು ಕರೆದಾನು, ನೀನು ಅವನ ಯಜ್ಞಭೋಜನವನ್ನು ಮಾಡಬೇಕಾದೀತು.</verse>
				<verse number="16">ಇದಲ್ಲದೆ ಅವರ ಪುತ್ರಿಯರನ್ನು ನಿನ್ನ ಪುತ್ರರಿಗೋಸ್ಕರ ತೆಗೆದುಕೊಳ್ಳಬೇಕಾಗಬಹುದು. ತೆಗೆದುಕೊಂಡರೆ ಅವರ ಪುತ್ರಿಯರು ತಮ್ಮ ದೇವರುಗಳನ್ನು ಆರಾಧಿಸಿ, ನಿಮ್ಮ ಪುತ್ರರನ್ನೂ ಅನ್ಯದೇವರುಗಳ ಆರಾಧನೆಯೆಂಬ ವ್ಯಭಿಚಾರಕ್ಕೆ ಎಳೆಯಬಹುದು.</verse>
				<verse number="17">“ನಿಮಗಾಗಿ ದೇವರುಗಳ ಎರಕ ಹೊಯ್ದ ವಿಗ್ರಹಗಳನ್ನು ಮಾಡಿಕೊಳ್ಳಬಾರದು.</verse>
				<verse number="18">“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಚೈತ್ರ ಮಾಸದ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ಅಬೀಬ ತಿಂಗಳಿನಲ್ಲಿ ನೀವು ಈಜಿಪ್ಟ್ ದೇಶವನ್ನು ಬಿಟ್ಟು ಬಂದಿದ್ದೀರಿ.</verse>
				<verse number="19">“ಪ್ರಥಮ ಗರ್ಭಫಲವೆಲ್ಲಾ ಅಂದರೆ ನಿಮ್ಮ ಪಶುಗಳಾಗಲಿ, ಎತ್ತುಗಳಾಗಲಿ, ಟಗರುಗಳಾಗಲಿ ಮೊದಲು ಹುಟ್ಟುವವುಗಳೆಲ್ಲಾ ಗಂಡಾಗಿದ್ದರೆ ಅವು ನನ್ನವೇ.</verse>
				<verse number="20">ಕತ್ತೆಮರಿಗೆ ಬದಲಾಗಿ ಕುರಿಮರಿಯನ್ನು ವಿಮೋಚಿಸಬೇಕು. ನೀನು ವಿಮೋಚಿಸದೆ ಹೋದರೆ, ಕುತ್ತಿಗೆಯನ್ನು ಮುರಿಯಬೇಕು. ನಿನ್ನ ಪುತ್ರರಲ್ಲಿ ಚೊಚ್ಚಲಾದವರನ್ನೆಲ್ಲಾ ವಿಮೋಚಿಸಬೇಕು. “ನನ್ನ ಮುಂದೆ ಯಾರೂ ಬರಿಗೈಯಿಂದ ಕಾಣಿಸಿಕೊಳ್ಳಬಾರದು.</verse>
				<verse number="21">“ಆರು ದಿನಗಳು ಕೆಲಸಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು. ಬಿತ್ತುವ ಕಾಲದಲ್ಲಿಯೂ ಕೊಯ್ಯುವ ಕಾಲದಲ್ಲಿಯೂ ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಬೇಕು.</verse>
				<verse number="22">“ಪ್ರಥಮ ಗೋಧಿ ಸುಗ್ಗಿಯ ವಾರಗಳ ಹಬ್ಬವನ್ನು ಮತ್ತು ವರ್ಷದ ಕೊನೆಯಲ್ಲಿ ಬೆಳೆ ಸಂಗ್ರಹದ ಹಬ್ಬವನ್ನು ಆಚರಿಸಬೇಕು.</verse>
				<verse number="23">ವರುಷಕ್ಕೆ ಮೂರು ಸಾರಿ ನಿಮ್ಮ ಗಂಡು ಮಕ್ಕಳೆಲ್ಲಾ ಸಾರ್ವಭೌಮ ಯೆಹೋವ ದೇವರ ಮುಂದೆ ಅಂದರೆ ಇಸ್ರಾಯೇಲಿನ ದೇವರ ಮುಂದೆ ಬರಬೇಕು.</verse>
				<verse number="24">ಏಕೆಂದರೆ ನಾನು ಜನಾಂಗಗಳನ್ನು ನಿಮ್ಮ ಸನ್ನಿಧಿಯಿಂದ ಹೊರಡಿಸಿಬಿಟ್ಟು, ನಿಮ್ಮ ಮೇರೆಗಳನ್ನು ವಿಸ್ತಾರ ಮಾಡುವೆನು. ವರ್ಷಕ್ಕೆ ಮೂರು ಸಾರಿ ನೀವು ನಿಮ್ಮ ಯೆಹೋವ ದೇವರ ಮುಂದೆ ಬರುವ ಸಮಯದಲ್ಲಿ ಯಾರೂ ನಿಮ್ಮ ಭೂಮಿಯನ್ನು ಅಪಹರಿಸಲು ಆಶೆಪಡುವುದಿಲ್ಲ.</verse>
				<verse number="25">“ಬಲಿ ಅರ್ಪಣೆಯ ರಕ್ತವನ್ನು ಹುಳಿಯಿರುವ ರೊಟ್ಟಿಯ ಸಂಗಡ ಅರ್ಪಿಸಬಾರದು. ಇಲ್ಲವೆ ಪಸ್ಕಹಬ್ಬದ ಬಲಿಯಲ್ಲಿ ಯಾವುದೂ ಬೆಳಗಿನವರೆಗೆ ಉಳಿಸಬಾರದು.</verse>
				<verse number="26">“ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಅತ್ಯುತ್ತಮವಾದದ್ದನ್ನು ನಿಮ್ಮ ಯೆಹೋವ ದೇವರ ಆಲಯಕ್ಕೆ ತರಬೇಕು. “ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು,” ಎಂದು ಹೇಳಿದರು.</verse>
				<verse number="27">ಯೆಹೋವ ದೇವರು ಮೋಶೆಗೆ ಹೀಗೆ ಹೇಳಿದರು, “ನೀನು ಈ ವಾಕ್ಯಗಳನ್ನು ಬರೆ. ಏಕೆಂದರೆ ಈ ವಾಕ್ಯಗಳ ಪ್ರಕಾರವೇ ನಾನು ನಿನ್ನ ಮತ್ತು ಇಸ್ರಾಯೇಲಿನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ.”</verse>
				<verse number="28">ಮೋಶೆಯು ಹಗಲಿರುಳು ನಲವತ್ತು ದಿವಸ ರೊಟ್ಟಿಯನ್ನು ತಿನ್ನದೇ, ನೀರನ್ನು ಕುಡಿಯದೇ ಅಲ್ಲಿ ಯೆಹೋವ ದೇವರ ಸಂಗಡ ಇದ್ದನು. ದೇವರು ಒಡಂಬಡಿಕೆಯ ವಾಕ್ಯಗಳಾದ ಹತ್ತು ಆಜ್ಞೆಗಳನ್ನು ಹಲಗೆಗಳ ಮೇಲೆ ಬರೆದರು.</verse>
				<verse number="29">ಮೋಶೆಯು ಸಾಕ್ಷಿಯ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದಾಗ, ಅವನು ಯೆಹೋವ ದೇವರ ಸಂಗಡ ಬೆಟ್ಟದಲ್ಲಿ ಮಾತನಾಡಿದ್ದರಿಂದ ಅವನ ಮುಖವು ಪ್ರಕಾಶಿಸುತ್ತದೆಂದು ಬೆಟ್ಟದಿಂದ ಇಳಿದಾಗ ಮೋಶೆಗೆ ತಿಳಿಯಲಿಲ್ಲ.</verse>
				<verse number="30">ಆದರೆ ಆರೋನನು ಮತ್ತು ಇಸ್ರಾಯೇಲರೆಲ್ಲರೂ ಮೋಶೆಯನ್ನು ನೋಡಿದಾಗ, ಇಗೋ, ಅವನ ಮುಖವು ಪ್ರಕಾಶಿಸುತ್ತಿತ್ತು. ಆದ್ದರಿಂದ ಅವರು ಅವನ ಹತ್ತಿರ ಬರುವುದಕ್ಕೆ ಭಯಪಟ್ಟರು.</verse>
				<verse number="31">ಮೋಶೆಯು ಅವರನ್ನು ಕರೆದಾಗ, ಆರೋನನು ಮತ್ತು ಸಭೆಯ ಮುಖ್ಯಸ್ಥರೆಲ್ಲರೂ ಅವನ ಬಳಿಗೆ ತಿರುಗಿ ಬಂದರು. ಆಗ ಮೋಶೆಯು ಅವರ ಸಂಗಡ ಮಾತನಾಡಿದನು.</verse>
				<verse number="32">ತರುವಾಯ ಇಸ್ರಾಯೇಲರೆಲ್ಲರೂ ಹತ್ತಿರ ಬಂದರು. ಆಗ ಅವನು ಅವರಿಗೆ, ಯೆಹೋವ ದೇವರು ತನಗೆ ಸೀನಾಯಿ ಬೆಟ್ಟದಲ್ಲಿ ಹೇಳಿದವುಗಳನ್ನೆಲ್ಲಾ ಆಜ್ಞಾಪಿಸಿ ಹೇಳಿದನು.</verse>
				<verse number="33">ಮೋಶೆಯು ಅವರ ಸಂಗಡ ಮಾತನಾಡಿ ಮುಗಿಸುವವರೆಗೂ ಅವನು ತನ್ನ ಮುಖದ ಮೇಲೆ ಮುಸುಕು ಹಾಕಿಕೊಂಡನು.</verse>
				<verse number="34">ಆದರೆ ಮೋಶೆಯು ಯೆಹೋವ ದೇವರ ಸನ್ನಿಧಿಯಲ್ಲಿ ಆತನ ಸಂಗಡ ಮಾತನಾಡುವುದಕ್ಕೆ ಒಳಗೆ ಪ್ರವೇಶಿಸಿ ಹೊರಗೆ ಬರುವವರೆಗೆ ಆ ಮುಸುಕನ್ನು ತೆಗೆದು ಬಿಡುತ್ತಿದ್ದನು. ಅವನು ಹೊರಗೆ ಬಂದು ತನಗೆ ಆಜ್ಞಾಪಿಸಿದ್ದನ್ನು ಇಸ್ರಾಯೇಲರಿಗೆ ಹೇಳಿದನು.</verse>
				<verse number="35">ಆಗ ಮೋಶೆಯ ಮುಖವು ಪ್ರಕಾಶಿಸುವುದನ್ನು ಇಸ್ರಾಯೇಲರು ನೋಡಿದ್ದರು. ಮೋಶೆ ದೇವರ ಸಂಗಡ ಮಾತನಾಡುವುದಕ್ಕೆ ಹೋಗುವವರೆಗೆ ಅವನು ತನ್ನ ಮುಖದ ಮೇಲೆ ತಿರುಗಿ ಮುಸುಕನ್ನು ಹಾಕಿಕೊಳ್ಳುತ್ತಿದ್ದನು.</verse>
			</chapter>
			<chapter number="35">
				<verse number="1">ಮೋಶೆಯು ಇಸ್ರಾಯೇಲರ ಸಮೂಹವನ್ನು ಒಟ್ಟುಗೂಡಿಸಿ ಅವರಿಗೆ, “ನೀವು ಅನುಸರಿಸಬೇಕೆಂದು ಯೆಹೋವ ದೇವರು ನಿಮಗೆ ಹೀಗೆ ಆಜ್ಞಾಪಿಸಿದ್ದಾರೆ.</verse>
				<verse number="2">ಆರು ದಿನಗಳು ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ನಿಮಗೆ ಪರಿಶುದ್ಧವಾಗಿರಬೇಕು. ಅದು ಯೆಹೋವ ದೇವರ ಸಬ್ಬತ್ ದಿನ. ಆ ದಿನದಲ್ಲಿ ಕೆಲಸಮಾಡುವವರಿಗೆ ಮರಣದಂಡನೆಯಾಗಬೇಕು.</verse>
				<verse number="3">ಸಬ್ಬತ್ ದಿನದಲ್ಲಿ ನೀವು ವಾಸಮಾಡುವ ಯಾವ ಮನೆಯಲ್ಲಿಯೂ ಬೆಂಕಿಯನ್ನು ಹೊತ್ತಿಸಬಾರದು,” ಎಂದು ಹೇಳಿದನು.</verse>
				<verse number="4">ಮೋಶೆಯು ಇಸ್ರಾಯೇಲರ ಇಡೀ ಸಮೂಹಕ್ಕೆ ಹೇಳಿದ್ದು: “ಯೆಹೋವ ದೇವರು ಆಜ್ಞಾಪಿಸಿದ್ದು ಇದೇ.</verse>
				<verse number="5">ನಿಮ್ಮಲ್ಲಿರುವದರಿಂದ ಯೆಹೋವ ದೇವರಿಗೆ ಕಾಣಿಕೆಯನ್ನು ಅರ್ಪಿಸಿರಿ. ಯಾರ‍್ಯಾರಿಗೆ ಇಷ್ಟವಿದೆಯೋ ಅವರು, “ಚಿನ್ನ, ಬೆಳ್ಳಿ, ಕಂಚು,</verse>
				<verse number="6">ನೀಲಿ, ನಾರು, ರಕ್ತವರ್ಣ ನಾರು, ಲಾಕಿ ಬಣ್ಣ, ನಾರು, ನಾರುಬಟ್ಟೆಗಳು, ಮೇಕೆಯ ಕೂದಲು,</verse>
				<verse number="7">ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಚರ್ಮಗಳು, ಕಡಲುಹಂದಿಯ ಚರ್ಮಗಳು, ಜಾಲಿ ಮರದ ಕಟ್ಟಿಗೆ,</verse>
				<verse number="8">ದೀಪಕ್ಕಾಗಿ ಓಲಿವ್ ಎಣ್ಣೆ ಅಭಿಷೇಕಿಸುವ ಎಣ್ಣೆಗೋಸ್ಕರ ಪರಿಮಳ ಮತ್ತು ಧೂಪಕ್ಕೋಸ್ಕರ ಸುಗಂಧ ದ್ರವ್ಯಗಳು,</verse>
				<verse number="9">ಏಫೋದ್ ಕವಚಕ್ಕಾಗಿ ಗೋಮೇಧಿಕಗಳು ಮತ್ತು ಎದೆಪದಕದಲ್ಲಿ ಹಚ್ಚಬೇಕಾದ ನಾನಾ ರತ್ನಗಳನ್ನು ತನ್ನಿರಿ.</verse>
				<verse number="10">“ನಿಮ್ಮಲ್ಲಿರುವ ಶಿಲ್ಪಿಗಳೆಲ್ಲರೂ ಬಂದು, ಯೆಹೋವ ದೇವರು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಬೇಕು. ಅವು ಯಾವುವೆಂದರೆ:</verse>
				<verse number="11">“ದೇವದರ್ಶನದ ಗುಡಾರವನ್ನು, ಅದರ ಮೇಲ್ಹೊದಿಕೆಯನ್ನು, ಅದರ ಕೊಂಡಿಗಳನ್ನು, ಅದರ ಚೌಕಟ್ಟುಗಳನ್ನು, ಅದರ ಅಗುಳಿಗಳನ್ನು, ಅದರ ಸ್ತಂಭಗಳನ್ನು, ಅದರ ಕುಣಿಕೆಗಳನ್ನು,</verse>
				<verse number="12">ಮಂಜೂಷವನ್ನು, ಅದರ ಕೋಲುಗಳನ್ನು, ಅವುಗಳೊಂದಿಗೆ ಕರುಣಾಸನವನ್ನು, ಮರೆಮಾಡುವ ಪರದೆಯನ್ನು,</verse>
				<verse number="13">ಮೇಜನ್ನು, ಅದರ ಕೋಲುಗಳನ್ನು, ಅದರ ಎಲ್ಲಾ ಉಪಕರಣಗಳನ್ನು, ನೈವೇದ್ಯದ ರೊಟ್ಟಿಯನ್ನು,</verse>
				<verse number="14">ಬೆಳಕಿಗಾಗಿ ದೀಪಸ್ತಂಭವನ್ನು, ಅದರ ಉಪಕರಣಗಳನ್ನು, ಅದರ ದೀಪಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು,</verse>
				<verse number="15">ಧೂಪವೇದಿಯನ್ನು, ಅದರ ಕೋಲುಗಳನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ಪರದೆಯನ್ನು,</verse>
				<verse number="16">ದಹನಬಲಿಯ ಪೀಠವನ್ನು, ಅದರೊಂದಿಗೆ ಕಂಚಿನ ಜಾಳಿಗೆಯನ್ನು, ಅದರ ಕೋಲುಗಳನ್ನು, ಅದರ ಎಲ್ಲಾ ಉಪಕರಣಗಳನ್ನು, ಕಂಚಿನ ಗಂಗಾಳವನ್ನು, ಅದರ ಕಾಲನ್ನು,</verse>
				<verse number="17">ದೇವದರ್ಶನದ ಗುಡಾರ ಅಂಗಳದ ಪರದೆಗಳನ್ನು, ಅದರ ಸ್ತಂಭಗಳನ್ನು, ಅದರ ಗದ್ದಿಗೇ ಕಲ್ಲುಗಳನ್ನು, ಅಂಗಳದ ಬಾಗಿಲಿನ ಪರದೆಗಳನ್ನು,</verse>
				<verse number="18">ಗುಡಾರದ ಗೂಟಗಳನ್ನು, ಅಂಗಳದ ಗೂಟಗಳನ್ನು, ಅದರ ಹಗ್ಗಗಳನ್ನು,</verse>
				<verse number="19">ಪರಿಶುದ್ಧಸ್ಥಳದ ಸೇವೆಗೋಸ್ಕರ ನೇಯ್ದ ಪರಿಶುದ್ಧ ವಸ್ತ್ರಗಳನ್ನು ಅಂದರೆ ಸೇವೆಮಾಡುವದಕ್ಕೆ ಯಾಜಕನಾದ ಆರೋನನಿಗೆ ಮತ್ತು ಅವನ ಪುತ್ರರಿಗೆ ಯಾಜಕವಸ್ತ್ರಗಳನ್ನು ಮಾಡಲಿ,” ಎಂದನು.</verse>
				<verse number="20">ಆಗ ಇಸ್ರಾಯೇಲರ ಸಮೂಹವೆಲ್ಲಾ ಮೋಶೆಯ ಸನ್ನಿಧಿಯಿಂದ ಹೊರಟು ಹೋದರು.</verse>
				<verse number="21">ಹೃದಯ ಪ್ರೇರಣೆ ಹೊಂದಿದವರೂ ಸಿದ್ಧಮನಸ್ಸಿನವರೂ ದೇವದರ್ಶನದ ಗುಡಾರದ ಕೆಲಸಕ್ಕಾಗಿಯೂ ಅದರ ಎಲ್ಲಾ ಸೇವೆಗಾಗಿಯೂ ಪರಿಶುದ್ಧ ವಸ್ತ್ರಗಳಿಗಾಗಿಯೂ ಯೆಹೋವ ದೇವರಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದರು.</verse>
				<verse number="22">ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮೂಗುತಿಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಜನರೆಲ್ಲಾ ಚಿನ್ನವನ್ನು ವಿಶೇಷ ಕಾಣಿಕೆಗಳನ್ನಾಗಿ ಯೆಹೋವ ದೇವರಿಗೆ ಅರ್ಪಿಸಿದರು.</verse>
				<verse number="23">ನೀಲಿ, ಧೂಮ್ರ, ರಕ್ತವರ್ಣ ದಾರಗಳೂ ನಯವಾದ ನಾರುಮಡಿ, ಮೇಕೆಯ ಕೂದಲು, ಟಗರುಗಳ ಕೆಂಪು ಬಣ್ಣದ ಚರ್ಮಗಳೂ ಕಡಲುಹಂದಿಯ ಚರ್ಮಗಳೂ ಯಾರ ಬಳಿಯಲ್ಲಿದ್ದವೋ ಅವರೆಲ್ಲರೂ ತಂದರು.</verse>
				<verse number="24">ಬೆಳ್ಳಿ, ಕಂಚುಗಳ ಕಾಣಿಕೆಗಳನ್ನು ಅರ್ಪಿಸುವುದಕ್ಕೆ ಮನಸ್ಸಿದ್ದವರೆಲ್ಲರೂ ಯೆಹೋವ ದೇವರಿಗೆ ಕಾಣಿಕೆಗಳನ್ನು ತಂದರು. ಸೇವೆಯ ಎಲ್ಲಾ ಕೆಲಸಕ್ಕೋಸ್ಕರ ಜಾಲಿ ಮರವಿದ್ದವರು ಅದನ್ನು ತಂದರು.</verse>
				<verse number="25">ಕುಶಲತೆ ಬಲ್ಲ ಸ್ತ್ರೀಯರೆಲ್ಲರೂ ತಮ್ಮ ಕೈಗಳಿಂದ ನೇಯ್ದ ನೀಲಿ, ಧೂಮ್ರ, ರಕ್ತವರ್ಣ ದಾರಗಳನ್ನು ಮತ್ತು ನಯವಾದ ನಾರುಮಡಿಯನ್ನು ತಂದರು.</verse>
				<verse number="26">ಕುಶಲತೆ ಬಲ್ಲ ಎಲ್ಲಾ ಸ್ತ್ರೀಯರು ಮೇಕೆ ಕೂದಲುಗಳನ್ನು ನೇಯ್ದರು.</verse>
				<verse number="27">ಅಧಿಪತಿಗಳು ಏಫೋದಿನಲ್ಲಿಯೂ ಎದೆಪದಕದಲ್ಲಿಯೂ ಕೂಡ್ರಿಸುವುದಕ್ಕೆ ಗೋಮೇಧಿಕಗಳನ್ನೂ ರತ್ನಗಳನ್ನೂ</verse>
				<verse number="28">ಸುಗಂಧದ್ರವ್ಯಗಳನ್ನೂ ದೀಪಕ್ಕೋಸ್ಕರವೂ ಅಭಿಷೇಕಿಸುವ ತೈಲಕ್ಕೋಸ್ಕರವೂ ಪರಿಮಳ ಧೂಪಕ್ಕೋಸ್ಕರವೂ ಎಣ್ಣೆಯನ್ನೂ ತಂದರು.</verse>
				<verse number="29">ಹೀಗೆ ಮಾಡಬೇಕೆಂದು ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ಬೇಕಾದವುಗಳನ್ನು ಇಸ್ರಾಯೇಲಿನ ಸ್ತ್ರೀಪುರುಷರೆಲ್ಲರು ಮನಃಪೂರ್ವಕವಾಗಿಯೇ ಯೆಹೋವ ದೇವರಿಗೆ ಕಾಣಿಕೆಯನ್ನು ತಂದರು.</verse>
				<verse number="30">ಆಗ ಮೋಶೆಯು ಇಸ್ರಾಯೇಲರಿಗೆ, “ನೋಡಿರಿ, ಯೆಹೋವ ದೇವರು ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯನ ಮಗನೂ ಆದ ಬೆಚಲಯೇಲ್ ಎಂಬವನನ್ನು ಗುರುತಿಸಿ ಆರಿಸಿಕೊಂಡಿದ್ದಾರೆ,</verse>
				<verse number="31">ಅವರು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕದಿಂದಲೂ</verse>
				<verse number="32">ಚಿನ್ನ, ಬೆಳ್ಳಿ, ಕಂಚಿನಲ್ಲಿ ಕಲಾತ್ಮಕವಾದ ವಿನ್ಯಾಸಗಳ ಕೆಲಸವನ್ನು ಮಾಡುವುದರಲ್ಲಿಯೂ</verse>
				<verse number="33">ರತ್ನಗಳಲ್ಲಿ ಕೆತ್ತನೆಯನ್ನೂ ಮರದಲ್ಲಿ ಕೆತ್ತನೆಯನ್ನೂ ಸಕಲ ವಿಧವಾದ ಕೌಶಲ್ಯದ ಕೆಲಸದ ಜ್ಞಾನದಿಂದಲೂ ಅವನನ್ನು ತುಂಬಿಸಿದ್ದಾರೆ.</verse>
				<verse number="34">ಇದಲ್ಲದೆ ಕಲಿಸುವುದಕ್ಕೆ ಅವನಿಗೆ ಮತ್ತು ದಾನನ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲಿಯಾಬನನ್ನು ನೇಮಿಸಿದ್ದಾರೆ.</verse>
				<verse number="35">ಕೆತ್ತನೆಯ ಕೆಲಸಗಳನ್ನು, ವಿನ್ಯಾಸದ ಕೆಲಸಗಳನ್ನು, ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ, ನಯವಾದ ನಾರುಬಟ್ಟೆ ಇವುಗಳಲ್ಲಿ ಕಸೂತಿ ಕೆಲಸಗಳನ್ನು ಮಾಡುವುದಕ್ಕೆ ಮತ್ತು ನೇಯ್ಗೆಯ ಕೆಲಸ ಮಾಡುವುದಕ್ಕೆ ಎಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಕಲ್ಪಿಸಿ ಮಾಡುವದಕ್ಕೆ ಯೆಹೋವ ದೇವರು ಅವರಿಗೆ ಜ್ಞಾನವನ್ನು ಅನುಗ್ರಹಿಸಿದ್ದಾರೆ.</verse>
			</chapter>
			<chapter number="36">
				<verse number="1">ತರುವಾಯ ಬೆಚಲಯೇಲ್ ಮತ್ತು ಒಹೋಲಿಯಾಬನೂ ಯೆಹೋವ ದೇವರು ಆಜ್ಞಾಪಿಸಿದಂತೆಯೇ ಎಲ್ಲವುಗಳನ್ನು ಮಾಡುವರು. ಅವರು ಪರಿಶುದ್ಧಸ್ಥಳದ ಸೇವೆಗೋಸ್ಕರ ಎಲ್ಲಾ ವಿಧವಾದ ಕೆಲಸವನ್ನು ಯೆಹೋವ ದೇವರಿಂದ ಜ್ಞಾನ ವಿವೇಕಗಳನ್ನು ಹೊಂದಿದ ಇತರರೊಂದಿಗೆ ಕೆಲಸಮಾಡುವರು,” ಎಂದು ಹೇಳಿದನು.</verse>
				<verse number="2">ಬೆಚಲಯೇಲನನ್ನು, ಒಹೋಲಿಯಾಬನನ್ನು ಮತ್ತು ಯೆಹೋವ ದೇವರು ಜ್ಞಾನಕೊಟ್ಟಿದ್ದ ಪ್ರತಿಯೊಬ್ಬ ಶಿಲ್ಪಿಯನ್ನೂ ಆ ಕೆಲಸ ಮಾಡುವುದಕ್ಕೆ ಸಿದ್ಧ ಮನಸ್ಸಿದ್ದ ಪ್ರತಿಯೊಬ್ಬನನ್ನೂ ಮೋಶೆಯು ಕರೆದನು.</verse>
				<verse number="3">ಅವರು ಪರಿಶುದ್ಧ ಆಲಯದ ನಿರ್ಮಾಣಕ್ಕೋಸ್ಕರ ಇಸ್ರಾಯೇಲರು ತಂದ ಕಾಣಿಕೆಗಳನ್ನೆಲ್ಲಾ ಮೋಶೆಯ ಬಳಿಯಿಂದ ತೆಗೆದುಕೊಂಡರು. ಇದಲ್ಲದೆ ಅವರು ಪ್ರತಿದಿನ ಬೆಳಿಗ್ಗೆ ಉಚಿತವಾದ ಕಾಣಿಕೆಗಳನ್ನು ತರುತ್ತಿದ್ದರು.</verse>
				<verse number="4">ಆಗ ಪರಿಶುದ್ಧಸ್ಥಳದ ಕೆಲಸವನ್ನು ಮಾಡುವ ಜ್ಞಾನಿಗಳೆಲ್ಲರೂ ತಮ್ಮ ತಮ್ಮ ಕೆಲಸವನ್ನು ಬಿಟ್ಟು ಬಂದು,</verse>
				<verse number="5">ಮೋಶೆಯ ಸಂಗಡ ಮಾತನಾಡಿ, “ಯೆಹೋವ ದೇವರು ಮಾಡಬೇಕೆಂದು ಆಜ್ಞಾಪಿಸಿದ ಸೇವೆಯ ಕೆಲಸಕ್ಕೆ ಬೇಕಾಗಿರುವುದಕ್ಕಿಂತ ಹೆಚ್ಚಾಗಿ ಕಾಣಿಕೆಗಳನ್ನು ಈ ಜನರು ತರುತ್ತಿದ್ದಾರೆ,” ಎಂದು ಹೇಳಿದರು.</verse>
				<verse number="6">ಆಗ ಮೋಶೆಯು, “ಇನ್ನು ಮೇಲೆ ಪರಿಶುದ್ಧಸ್ಥಳದ ಕಾಣಿಕೆಗೋಸ್ಕರ ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಕೆಲಸ ಮಾಡಬಾರದೆಂದು ಪಾಳೆಯದಲ್ಲೆಲ್ಲಾ ಪ್ರಕಟಿಸಬೇಕು,” ಎಂದು ಆಜ್ಞಾಪಿಸಿದನು. ಹೀಗೆ ಜನರು ಕಾಣಿಕೆಗಳನ್ನು ತರುವುದನ್ನು ನಿಲ್ಲಿಸಿಬಿಟ್ಟರು.</verse>
				<verse number="7">ಏಕೆಂದರೆ ಎಲ್ಲಾ ಕೆಲಸವನ್ನು ಮಾಡುವುದಕ್ಕೆ ಸಾಕಾಗಿ ಮಿಕ್ಕುವಷ್ಟು ಸಾಮಗ್ರಿಗಳು ದೊರೆತವು.</verse>
				<verse number="8">ಕೆಲಸದವರಲ್ಲಿದ್ದ ಶಿಲ್ಪಿಗಳೆಲ್ಲರೂ ಗುಡಾರವನ್ನು ಹತ್ತು ಪರದೆಗಳಿಂದ ಮಾಡಿ, ನಯವಾಗಿ ಹೊಸೆದ ನಾರಿನಿಂದಲೂ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ಕೌಶಲ್ಯದ ಕೆಲಸದಿಂದಲೂ ಕೆರೂಬಿಗಳನ್ನು ಮಾಡಿದರು.</verse>
				<verse number="9">ಎಲ್ಲಾ ಪರದೆಗಳೂ ಒಂದೇ ಅಳತೆಯವುಗಳಾಗಿದ್ದವು. ಪ್ರತಿಯೊಂದು ಪರದೆಯು ಸುಮಾರು ಹದಿಮೂರು ಮೀಟರ್ ಉದ್ದ ಮತ್ತು ಎರಡು ಮೀಟರ್ ಅಗಲವಿದ್ದವು.</verse>
				<verse number="10">ಅವರು ಐದು ಪರದೆಗಳನ್ನು ಒಂದಕ್ಕೊಂದು ಜೋಡಿಸಿದರು ಮತ್ತು ಇನ್ನುಳಿದ ಐದು ಪರದೆಗಳನ್ನೂ ಒಂದಕ್ಕೊಂದು ಜೋಡಿಸಿದರು.</verse>
				<verse number="11">ಕೊನೆಯ ಪರದೆಯ ಅಂಚಿನ ಒಂದು ಜೋಡಣೆಯ ಸ್ಥಳದಲ್ಲಿ ನೀಲಿ ದಾರಿನ ಕುಣಿಕೆಗಳನ್ನು ಮಾಡಿದ್ದಲ್ಲದೆ, ಎರಡನೆಯ ಜೋಡಣೆಯ ಕಟ್ಟಕಡೆಯ ಪರದೆಯ ಅಂಚಿನಲ್ಲಿಯೂ ಅದೇ ಪ್ರಕಾರ ಮಾಡಿದರು.</verse>
				<verse number="12">ಒಂದು ಪರದೆಯಲ್ಲಿ ಐವತ್ತು ಕುಣಿಕೆಗಳನ್ನು ಮಾಡಿ, ಇನ್ನೊಂದು ಪರದೆಯ ಅಂಚನ್ನು ಜೋಡಿಸುವ ಸ್ಥಳದಲ್ಲಿ ಐವತ್ತು ಕುಣಿಕೆಗಳನ್ನು ಮಾಡಿದರು. ಆ ಕುಣಿಕೆಗಳು ಒಂದು ಪರದೆಯನ್ನು ಮತ್ತೊಂದು ಪರದೆಯು ಹಿಡಿದುಕೊಳ್ಳುವಂತೆ ಮಾಡಿದರು.</verse>
				<verse number="13">ಅವರು ಬಂಗಾರದ ಐವತ್ತು ಕೊಂಡಿಗಳನ್ನು ಮಾಡಿ, ಅವುಗಳಿಂದ ಎರಡು ಜೋಡಣೆ ಪರದೆಗಳನ್ನು ಒಂದಕ್ಕೊಂದು ಜೋಡಿಸಿದರು. ಹೀಗೆ ಅದು ಒಂದೇ ಗುಡಾರವಾಯಿತು.</verse>
				<verse number="14">ಈ ಗುಡಾರದ ಮೇಲೆ ಹೊದಿಸುವುದಕ್ಕಾಗಿ ಅವರು ಮೇಕೆಯ ಕೂದಲಿನಿಂದ ಹನ್ನೊಂದು ಪರದೆಗಳನ್ನು ಮಾಡಿದರು.</verse>
				<verse number="15">ಒಂದೊಂದು ಪರದೆಯು ಸುಮಾರು ಹದಿಮೂರುವರೆ ಮೀಟರ್ ಉದ್ದ ಮತ್ತು ಒಂದುವರೆ ಮೀಟರ್ ಅಗಲ ಇರಬೇಕು. ಹನ್ನೊಂದು ಪರದೆಗಳೂ ಒಂದೇ ಅಳತೆಯಾಗಿದ್ದವು.</verse>
				<verse number="16">ಅವರು ಐದು ಪರದೆಗಳನ್ನು ಒಂದಾಗಿ ಜೋಡಿಸಿ ಇನ್ನುಳಿದ ಆರು ಪರದೆಗಳನ್ನು ಒಂದಾಗಿ ಜೋಡಿಸಿದರು.</verse>
				<verse number="17">ಅವರು ಕೊನೆಯ ಒಂದು ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು, ಜೋಡಣೆಯಲ್ಲಿರುವ ಕೊನೆಯ ಎರಡನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು ಮಾಡಿದರು.</verse>
				<verse number="18">ಅದು ಒಂದೇ ಡೇರೆ ಆಗುವಂತೆ ಅವುಗಳ ಜೋಡಣೆಗೆ ಅವರು ಕಂಚಿನ ಐವತ್ತು ಕೊಂಡಿಗಳನ್ನು ಮಾಡಿದರು.</verse>
				<verse number="19">ಅದಲ್ಲದೆ ಗುಡಾರದ ಮೇಲ್ಹೊದಿಕೆಯನ್ನು ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದಿಂದ ಮಾಡಿದರು. ಅದರ ಮೇಲೆ ಕಡಲುಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಿದರು.</verse>
				<verse number="20">ಗುಡಾರವು ನಿಂತುಕೊಂಡಿರುವುದಕ್ಕೆ ಅವರು ಜಾಲಿ ಮರದಿಂದ ಚೌಕಟ್ಟುಗಳನ್ನು ಮಾಡಿದರು.</verse>
				<verse number="21">ಒಂದೊಂದು ಚೌಕಟ್ಟಿನ ಉದ್ದವು ಸುಮಾರು ನಾಲ್ಕುವರೆ ಮೀಟರ್ ಮತ್ತು ಅಗಲ ಅರವತ್ತೆಂಟು ಸೆಂಟಿಮೀಟರ್ ಇತ್ತು.</verse>
				<verse number="22">ಒಂದು ಚೌಕಟ್ಟಿಗೆ ಒಂದಕ್ಕೊಂದು ಸರಿಯಾದ ಅಂತರದಲ್ಲಿ ಎರಡು ಕೈಗಳನ್ನು ಮಾಡಿದರು. ಅದೇ ಪ್ರಕಾರ ಅವರು ಗುಡಾರದ ಎಲ್ಲಾ ಚೌಕಟ್ಟುಗಳಿಗೆ ಮಾಡಿದರು.</verse>
				<verse number="23">ಅವರು ಗುಡಾರದ ದಕ್ಷಿಣ ಭಾಗದಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು.</verse>
				<verse number="24">ಅವರು ಇಪ್ಪತ್ತು ಚೌಕಟ್ಟುಗಳ ಕೆಳಗೆ ನಾಲ್ವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಿದರು ಮತ್ತು ಒಂದೊಂದು ಚೌಕಟ್ಟಿನ ಕೆಳಗೆ ಅದರ ಎರಡು ಪಟ್ಟಿಗಳಿಗಾಗಿ ಎರಡೆರಡು ಕುಳಿಗಳನ್ನು ಮಾಡಿದರು.</verse>
				<verse number="25">ಇನ್ನೊಂದು ಭಾಗಕ್ಕೆ ಅಂದರೆ ಗುಡಾರದ ಉತ್ತರ ದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು.</verse>
				<verse number="26">ಒಂದೊಂದು ಚೌಕಟ್ಟಿನ ಕೆಳಗೆ ಎರಡೆರಡು ಗದ್ದಿಗೇ ಕಲ್ಲುಗಳಂತೆ ನಲವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಿದರು.</verse>
				<verse number="27">ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮದ ಕಡೆಗೆ ಆರು ಚೌಕಟ್ಟುಗಳನ್ನು ಮಾಡಿದರು.</verse>
				<verse number="28">ಅವರು ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿದರು.</verse>
				<verse number="29">ಈ ಮೂಲೆಗಳನ್ನು ಅಡಿಯಲ್ಲಿ ಜೋಡಿಸಿರಬೇಕು. ಮೇಲ್ಭಾಗದಲ್ಲಿಯೂ ಒಂದೇ ಬಳೆಗೆ ಜೋಡಿಸಿದರು. ಇದೇ ರೀತಿಯಲ್ಲಿ ಅವರು ಎರಡು ಮೂಲೆಗಳಲ್ಲಿ ಎರಡಕ್ಕೂ ಮಾಡಿದರು.</verse>
				<verse number="30">ಇಂಥ ಎಂಟು ಚೌಕಟ್ಟುಗಳಿದ್ದವು. ಪ್ರತಿಯೊಂದು ಚೌಕಟ್ಟಿನ ಕೆಳಗೆ ಎರಡೆರಡು ಕೂರುಗದ್ದಿಗೇ ಕಲ್ಲುಗಳಂತೆ ಅವುಗಳಿಗೆ ಹದಿನಾರು ಬೆಳ್ಳಿಯ ಕೂರುಗದ್ದಿಗೇ ಕಲ್ಲುಗಳಿದ್ದವು.</verse>
				<verse number="31">ಅವರು ಜಾಲಿ ಮರದಿಂದ ಅಗುಳಿಗಳನ್ನು ಮಾಡಿದರು, ಗುಡಾರದ ಒಂದು ಕಡೆಯ ಚೌಕಟ್ಟುಗಳಿಗೆ ಐದು ಅಗುಳಿಗಳು,</verse>
				<verse number="32">ಗುಡಾರದ ಇನ್ನೊಂದು ಭಾಗದ ಚೌಕಟ್ಟುಗಳಿಗೆ ಐದು ಅಗುಳಿಗಳನ್ನು, ಅದರ ಹಿಂದುಗಡೆಯ ಅಂದರೆ ಪಶ್ಚಿಮ ಭಾಗದಲ್ಲಿರುವ ಚೌಕಟ್ಟುಗಳಿಗೆ ಐದು ಅಗುಳಿಗಳನ್ನು ಮಾಡಿದರು.</verse>
				<verse number="33">ಮಧ್ಯದ ಅಗುಳಿಯು ಚೌಕಟ್ಟುಗಳ ನಡುವೆ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹಾದು ಹೋಗುವಹಾಗೆ ಮಾಡಿದರು.</verse>
				<verse number="34">ಆ ಚೌಕಟ್ಟುಗಳನ್ನು ಬಂಗಾರದಿಂದ ಹೊದಿಸಿ, ಆ ಅಗುಳಿಗಳಿಗಾಗಿ ಬಂಗಾರದಿಂದ ಬಳೆಗಳನ್ನು ಮಾಡಿ, ಮಾಡಿದ ಅಗುಳಿಗಳನ್ನು ಬಂಗಾರದಿಂದ ಹೊದಿಸಿದರು.</verse>
				<verse number="35">ಪರದೆಯನ್ನು ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಿದರು. ಅದರ ಮೇಲೆ ಕೌಶಲ್ಯದಿಂದ ಕಸೂತಿಹಾಕಿ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಿದರು.</verse>
				<verse number="36">ಅದಕ್ಕೆ ಜಾಲಿ ಮರದ ನಾಲ್ಕು ಸ್ತಂಭಗಳನ್ನು ಮಾಡಿ, ಬಂಗಾರ ತಗಡುಗಳಿಂದ ಅವುಗಳನ್ನು ಹೊದಿಸಿದರು. ಅವುಗಳಿಗೆ ಬಂಗಾರದ ಕೊಂಡಿಗಳನ್ನು ಮಾಡಿ, ಅವುಗಳಿಗೆ ಬೆಳ್ಳಿಯ ನಾಲ್ಕು ಗದ್ದಿಗೇ ಕಲ್ಲುಗಳನ್ನು ಎರಕ ಹೊಯ್ದರು.</verse>
				<verse number="37">ಗುಡಾರದ ಬಾಗಿಲಿಗೆ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರುಗಳಿಂದ ಹೊಸೆದು ಕಸೂತಿ ಕೆಲಸಮಾಡಿದ ಪರದೆಯನ್ನು ಮಾಡಿದರು.</verse>
				<verse number="38">ಕೊಂಡಿಯಿರುವ ಐದು ಕಂಬಗಳನ್ನು ಮಾಡಿ, ಅವುಗಳ ತಲೆಗಳನ್ನೂ ಕಂಬಗಳನ್ನೂ ಬಂಗಾರದಿಂದ ಹೊದಿಸಿದರು. ಆದರೆ ಅವುಗಳ ಐದು ಗದ್ದಿಗೇ ಕಲ್ಲುಗಳನ್ನು ಕಂಚಿನಿಂದ ಮಾಡಿದರು.</verse>
			</chapter>
			<chapter number="37">
				<verse number="1">ಬೆಚಲಯೇಲನು ಜಾಲಿ ಮರದಿಂದ ಸುಮಾರು ಒಂದು ಮೀಟರ್ ಉದ್ದ ಮತ್ತು ಅರವತ್ತೆಂಟು ಸೆಂಟಿಮೀಟರ್ ಅಗಲ ಮತ್ತು ಎತ್ತರವಾಗಿರುವ ಮಂಜೂಷವನ್ನು ಮಾಡಿದನು.</verse>
				<verse number="2">ಅದನ್ನು ಶುದ್ಧ ಬಂಗಾರದಿಂದ ಒಳಗೂ ಹೊರಗೂ ಹೊದಿಸಿ, ಅದರ ಸುತ್ತಲೂ ಬಂಗಾರದ ತೋರಣವನ್ನು ಮಾಡಿದನು.</verse>
				<verse number="3">ಅದರ ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ ಎಂದರೆ ಒಂದು ಕಡೆಯಲ್ಲಿ ಎರಡು ಬಳೆಗಳನ್ನು ಮತ್ತೊಂದು ಕಡೆಯಲ್ಲಿ ಎರಡು ಬಳೆಗಳನ್ನು ಇರಿಸಿದನು.</verse>
				<verse number="4">ಆಮೇಲೆ ಜಾಲಿ ಮರದ ಕೋಲುಗಳನ್ನು ಮಾಡಿಸಿ, ಅವುಗಳಿಗೆ ಬಂಗಾರದಿಂದ ಹೊದಿಸಬೇಕು.</verse>
				<verse number="5">ಮಂಜೂಷವನ್ನು ಹೊರುವುದಕ್ಕಾಗಿ ಕೋಲುಗಳನ್ನು ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಿದನು.</verse>
				<verse number="6">ಇದಲ್ಲದೆ ಸುಮಾರು ನೂರಹತ್ತು ಸೆಂಟಿಮೀಟರ್ ಉದ್ದವೂ ಎಪ್ಪತ್ತು ಸೆಂಟಿಮೀಟರ್ ಅಗಲವೂ ಇರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಿದನು.</verse>
				<verse number="7">ಅವನು ಕರುಣಾಸನದ ಎರಡು ತುದಿಗಳಲ್ಲಿ ಎರಡು ಬಂಗಾರದಿಂದ ಕೆರೂಬಿಗಳನ್ನು ನಕಾಸಿ ಕೆಲಸದಿಂದ ಮಾಡಿದನು.</verse>
				<verse number="8">ಒಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನೂ ಇನ್ನೊಂದು ಬದಿಯ ಕೊನೆಯಲ್ಲಿ ಒಂದು ಕೆರೂಬಿಯನ್ನೂ ಮಾಡಿದನು. ಹೀಗೆ ಕರುಣಾಸನದ ಎರಡೂ ಬದಿಗಳಲ್ಲಿ ಕೆರೂಬಿಯನ್ನು ಮಾಡಿದನು.</verse>
				<verse number="9">ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿರುವಂತೆಯೂ ಕರುಣಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಕೆರೂಬಿಗಳ ಮುಖಗಳು ಎದುರುಬದುರಾಗಿ ಕರುಣಾಸನವನ್ನು ನೋಡುತ್ತಿದ್ದವು.</verse>
				<verse number="10">ಸುಮಾರು ತೊಂಬತ್ತು ಸೆಂಟಿಮೀಟರ್ ಉದ್ದ, ನಲವತ್ತೈದು ಸೆಂಟಿಮೀಟರ್ ಅಗಲ ಮತ್ತು ಅರವತ್ತೆಂಟು ಸೆಂಟಿಮೀಟರ್ ಎತ್ತರ ಇರುವ ಮೇಜನ್ನು ಜಾಲಿ ಮರದಿಂದ ಮಾಡಿದನು.</verse>
				<verse number="11">ಆಮೇಲೆ ಅದನ್ನು ಶುದ್ಧ ಬಂಗಾರದಿಂದ ಹೊದಿಸಿ, ಸುತ್ತಲೂ ಬಂಗಾರದ ತೋರಣ ಕಟ್ಟಿದನು.</verse>
				<verse number="12">ಸುತ್ತಲೂ ಅಂಗೈ ಅಗಲದ ಅಡ್ಡಪಟ್ಟಿಯನ್ನು ಮಾಡಿಸಿ, ಅಂಚಿನ ಸುತ್ತಲೂ ಬಂಗಾರದ ತೋರಣವನ್ನು ಕಟ್ಟಿದರು.</verse>
				<verse number="13">ಮೇಜಿಗೆ ಬಂಗಾರದ ನಾಲ್ಕು ಬಳೆಗಳನ್ನು ಎರಕ ಹೊಯ್ದು, ಅವುಗಳನ್ನು ಅದರ ನಾಲ್ಕು ಕಾಲುಗಳಲ್ಲಿರುವ ನಾಲ್ಕು ಮೂಲೆಗಳಿಗೆ ಜೋಡಿಸಿದರು.</verse>
				<verse number="14">ಮೇಜನ್ನು ಹೊತ್ತುಕೊಂಡು ಹೋಗಲು ಕೋಲುಗಳನ್ನು ಮಾಡಿ, ಈ ಬಳೆಗಳನ್ನು ಅಡ್ಡಪಟ್ಟಿಗೆ ಸಮೀಪದಲ್ಲಿ ಕೂಡಿಸಿದರು.</verse>
				<verse number="15">ಮೇಜನ್ನು ಹೊತ್ತುಕೊಂಡು ಹೋಗುವವರಿಗಾಗಿ ಜಾಲಿ ಮರದಿಂದ ಕೋಲುಗಳನ್ನು ಮಾಡಿ, ಅವುಗಳಿಗೆ ಬಂಗಾರದಿಂದ ಹೊದಿಸಲಾಯಿತು.</verse>
				<verse number="16">ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು ಅಂದರೆ ಹರಿವಾಣ, ಧೂಪಾರತಿಗಳು, ಹೂಜೆಗಳು, ಪಾನದ್ರವ್ಯಗಳ ಅರ್ಪಣೆಗಾಗಿ ಬೇಕಾಗುವ ಬಟ್ಟಲುಗಳನ್ನು ಶುದ್ಧ ಬಂಗಾರದಿಂದ ಮಾಡಿದರು.</verse>
				<verse number="17">ಚೊಕ್ಕ ಬಂಗಾರದಿಂದ ದೀಪಸ್ತಂಭವನ್ನು ಮಾಡಿದರು. ಅದರ ಬುಡವನ್ನೂ ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿದರು. ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳಂತೆಯೂ ಹಣತೆಗಳಂತೆಯೂ ಮೊಗ್ಗುಗಳಂತೆಯೂ ಇದ್ದವು.</verse>
				<verse number="18">ಆ ದೀಪಸ್ತಂಭದಿಂದ ಆರು ಕೊಂಬೆಗಳು ಹೊರ ಬಂದಿದ್ದವು. ಅಂದರೆ ಒಂದು ಭಾಗದಿಂದ ಮೂರು ಕೊಂಬೆಗಳೂ ಮತ್ತೊಂದು ಭಾಗದಿಂದ ಮೂರು ಕೊಂಬೆಗಳೂ ಹೊರಗೆ ಬಂದಿದ್ದವು.</verse>
				<verse number="19">ಒಂದು ಕೊಂಬೆಯಲ್ಲಿ ಬಾದಾಮಿ ಪುಷ್ಟದಂತಿರುವ ಮೂರು ಹಣತೆಗಳು, ಮೊಗ್ಗು ಪುಷ್ಟಗಳಿದ್ದವು ಮತ್ತು ಮತ್ತೊಂದು ಕೊಂಬೆಯಲ್ಲಿ ಬಾದಾಮಿಯ ಪುಷ್ಟವಿದ್ದ ಮೂರು ಹಣತೆಗಳು ಮೊಗ್ಗು ಪುಷ್ಟಗಳಿದ್ದವು. ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿಯೂ ಇದ್ದವು.</verse>
				<verse number="20">ದೀಪಸ್ತಂಭದಲ್ಲಿಯೇ ಬಾದಾಮಿ ಹೂವುಗಳಂತೆಯೂ ಮೊಗ್ಗುಗಳಂತೆಯೂ ಅದಕ್ಕೊಂದು ಪುಷ್ಪದ ಆಕಾರದಲ್ಲಿ ನಾಲ್ಕು ಹಣತೆಗಳು ಇದ್ದವು.</verse>
				<verse number="21">ದೀಪಸ್ತಂಭದಿಂದ ಹೊರಬರುವ ಒಂದು ಮೊಗ್ಗು ಮೊದಲ ಜೋಡಿ ಕೊಂಬೆಗಳ ಅಡಿಯಲ್ಲಿತ್ತು, ಎರಡನೇ ಮೊಗ್ಗು ಎರಡನೇ ಜೋಡಿಯ ಅಡಿಯಲ್ಲಿ ಮತ್ತು ಮೂರನೆಯ ಮೊಗ್ಗು ಮೂರನೆಯ ಜೋಡಿಯ ಅಡಿಯಲ್ಲಿ ಹೀಗೆ ಆರು ಕೊಂಬೆಗಳಿದ್ದವು.</verse>
				<verse number="22">ಅದರ ಮೊಗ್ಗುಗಳೂ ಕೊಂಬೆಗಳೂ ಅದರಿಂದಲೇ ಬಂದಿದ್ದವು. ದೀಪಸ್ತಂಭವನ್ನೆಲ್ಲಾ ಶುದ್ಧ ಬಂಗಾರದ ಒಂದೇ ಅಚ್ಚಿನಲ್ಲಿ ಬರೆದ ಕಲಾಕೃತಿಯಾಗಿತ್ತು.</verse>
				<verse number="23">ಅವರು ಏಳು ದೀಪಗಳನ್ನೂ ಕುಡಿ ಕತ್ತರಿಸುವ ಕತ್ತರಿಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಿದರು.</verse>
				<verse number="24">ದೀಪಸ್ತಂಭವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಒಂದು ತಲಾಂತು ಶುದ್ಧ ಬಂಗಾರದಿಂದ ಮಾಡಿದರು.</verse>
				<verse number="25">ಜಾಲಿ ಮರದ ಕಟ್ಟಿಗೆಯಿಂದ ಧೂಪವೇದಿಯನ್ನು ಮಾಡಿದರು. ಅದರ ಉದ್ದ ಮತ್ತು ಅಗಲ ಸುಮಾರು ನಲವತ್ತೈದು ಸೆಂಟಿಮೀಟರ್, ಅದರ ಎತ್ತರ ಸುಮಾರು ತೊಂಬತ್ತು ಸೆಂಟಿಮೀಟರ್ ಇದ್ದು, ಅದು ಚಚ್ಚೌಕವಾಗಿತ್ತು. ಅದರ ಕೊಂಬುಗಳನ್ನು ಸಹ ಜಾಲಿ ಮರದಿಂದಲೇ ಮಾಡಲಾಗಿತ್ತು.</verse>
				<verse number="26">ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿದರು. ಅದರ ಸುತ್ತಲೂ ಬಂಗಾರದ ಗೋಟನ್ನು ಕಟ್ಟಿಸಿದರು.</verse>
				<verse number="27">ಅದರ ಗೋಟಿನ ಕೆಳಗೆ ಎರಡು ಬದಿಗಿರುವ ಎರಡು ಮೂಲೆಗಳಲ್ಲಿ ಎರಡು ಬಂಗಾರದ ಬಳೆಗಳನ್ನು ಮಾಡಿದರು, ಇವುಗಳನ್ನು ಹೊರುವುದಕ್ಕಾಗಿ ಅವುಗಳಲ್ಲಿ ಕೋಲುಗಳನ್ನು ಸಿಕ್ಕಿಸಿದರು.</verse>
				<verse number="28">ಕೋಲುಗಳನ್ನು ಜಾಲಿ ಮರದಿಂದ ಮಾಡಿ, ಅವುಗಳನ್ನು ಬಂಗಾರದಿಂದ ಹೊದಿಸಿದರು.</verse>
				<verse number="29">ಅನಂತರ ಅವರು ಸುಗಂಧಕಾರನ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮತ್ತು ಪರಿಮಳ ದ್ರವ್ಯದಿಂದ ಶುದ್ಧವಾದ ಧೂಪವನ್ನು ತಯಾರಿಸಿದರು.</verse>
			</chapter>
			<chapter number="38">
				<verse number="1">ಬೆಚಲೇಲನು ಜಾಲಿ ಮರದಿಂದ ದಹನಬಲಿಯ ಪೀಠವನ್ನು ಮಾಡಿದರು. ಅದರ ಎತ್ತರವು ಸುಮಾರು ಒಂದು ಮೀಟರ್ ಇರಬೇಕು. ಅದರ ಉದ್ದ ಮತ್ತು ಅಗಲವು ಸುಮಾರು ಎರಡೂವರೆ ಮೀಟರ್ ಚಚ್ಚೌಕವಾಗಿರಬೇಕು.</verse>
				<verse number="2">ಅದರ ನಾಲ್ಕು ಮೂಲೆಗಳಲ್ಲಿ ಕೊಂಬುಗಳನ್ನು ಮಾಡಿದರು. ಆ ಕೊಂಬುಗಳು ಆ ಬಲಿಪೀಠಕ್ಕೆ ಏಕವಾಗಿರಬೇಕು. ಅವುಗಳನ್ನು ಕಂಚಿನಿಂದ ಹೊದಿಸಿದರು.</verse>
				<verse number="3">ಅನಂತರ ಅವರು ಬಲಿಪೀಠದ ಉಪಕರಣಗಳನ್ನೆಲ್ಲಾ ಅಂದರೆ ಬಟ್ಟಲುಗಳು, ಸಲಿಕೆಗಳು, ಮುಳ್ಳುಚಮಚಗಳು, ಬೋಗುಣಿಗಳು, ಅಗ್ಗಿಷ್ಟಿಕೆಗಳು ಇವುಗಳೆನ್ನೆಲ್ಲಾ ಕಂಚಿನಿಂದ ಮಾಡಿದರು.</verse>
				<verse number="4">ಬಲಿಪೀಠಕ್ಕೆ ಹೆಣಿಗೆ ಕೆಲಸದಿಂದ ಕಂಚಿನ ಜಾಳಿಗೆಯನ್ನು ಮಾಡಿದರು. ಅದು ಬಲಿಪೀಠದ ಸುತ್ತಲಿರುವ ಕಟ್ಟಿಗೆಯ ಕಟ್ಟೆಯ ಕೆಳಗೆ ಇದ್ದು, ಅದನ್ನು ಬಲಿಪೀಠದ ಕೆಳಭಾಗದಿಂದ ಮಧ್ಯದವರೆಗೆ ಇರುವಂತೆ ಮಾಡಿದರು.</verse>
				<verse number="5">ವೇದಿಯನ್ನು ಹೊರುವಾಗ ಕೋಲು ಸಿಕ್ಕಿಸುವುದಕ್ಕೋಸ್ಕರ ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಬಳೆಗಳನ್ನು ಕಂಚಿನಿಂದ ಎರಕ ಹೊಯ್ದರು.</verse>
				<verse number="6">ಅವರು ಜಾಲಿ ಮರದಿಂದ ಕೋಲುಗಳನ್ನು ಮಾಡಿ, ಅವುಗಳನ್ನು ಕಂಚಿನಿಂದ ಹೊದಿಸಿದರು.</verse>
				<verse number="7">ಬಲಿಪೀಠವನ್ನು ಹೊರುವುದಕ್ಕೆ ಅದರ ಎರಡೂ ಬದಿಯಲ್ಲಿ ಮಾಡಿದ ಕೋಲುಗಳನ್ನು ಬಳೆಗಳಲ್ಲಿ ಸೇರಿಸಿದರು. ಅವರು ಆ ಬಲಿಪೀಠವನ್ನು ಚೌಕಟ್ಟುಗಳಿಂದ ಪೊಳ್ಳಾಗಿರುವಂತೆ ಮಾಡಿದರು.</verse>
				<verse number="8">ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಸೇವೆಮಾಡುತ್ತಿದ್ದ ಸ್ತ್ರೀಯರಿಂದ ಕೂಡಿಸಿದ ಕಂಚಿನ ದರ್ಪಣಗಳಿಂದ ಕಂಚಿನಿಂದ ಬೋಗುಣಿಯನ್ನು ಅದರ ಪೀಠವನ್ನೂ ಮಾಡಿದರು.</verse>
				<verse number="9">ಅವರು ಗುಡಾರದ ಅಂಗಳವನ್ನು ಮಾಡಿದರು. ಹೇಗೆಂದರೆ ದಕ್ಷಿಣ ದಿಕ್ಕಿನಲ್ಲಿರುವ ಅಂಗಳಕ್ಕೋಸ್ಕರ ನಯವಾಗಿ ಹೊಸೆದ ನಾರಿನ ಪರದೆಗಳನ್ನು ಮಾಡಲಾಗಿತ್ತು. ಅವು ಸುಮಾರು ನಲವತ್ತೈದು ಮೀಟರ್ ಉದ್ದವಾಗಿದ್ದವು.</verse>
				<verse number="10">ಆ ಕಡೆಯಲ್ಲಿ ಇಪ್ಪತ್ತು ಸ್ತಂಭಗಳಿದ್ದವು ಮತ್ತು ಅವುಗಳಿಗೆ ಇಪ್ಪತ್ತು ಕಂಚಿನ ಗದ್ದಿಗೇ ಕಲ್ಲುಗಳಿದ್ದವು. ಸ್ತಂಭಗಳ ಕೊಂಡಿಗಳನ್ನು ಮತ್ತು ಅವುಗಳ ಪಟ್ಟಿಗಳನ್ನು ಬೆಳ್ಳಿಯಿಂದ ಮಾಡಲಾಗಿತ್ತು.</verse>
				<verse number="11">ಉತ್ತರ ದಿಕ್ಕಿನ ಪರದೆಗಳು ಸುಮಾರು ನಲವತ್ತೈದು ಮೀಟರ್ ಉದ್ದವಾಗಿದ್ದವು. ಇಪ್ಪತ್ತು ಸ್ತಂಭಗಳು ಮತ್ತು ಇಪ್ಪತ್ತು ಕಂಚಿನ ಗದ್ದಿಗೇ ಕಲ್ಲುಗಳಿದ್ದವು. ಆ ಸ್ತಂಭಗಳ ಕೊಂಡಿಗಳು ಮತ್ತು ಕಟ್ಟುಗಳು ಬೆಳ್ಳಿಯಿಂದ ಮಾಡಿದ್ದಾಗಿದ್ದವು.</verse>
				<verse number="12">ಅಂಗಳದ ಪಶ್ಚಿಮ ಭಾಗದಲ್ಲಿ ಸುಮಾರು ಇಪ್ಪತ್ತಮೂರು ಮೀಟರ್ ಉದ್ದವಾದ ಪರದೆಗಳಿದ್ದವು. ಹತ್ತು ಸ್ತಂಭಗಳು ಮತ್ತು ಆ ಸ್ತಂಭಗಳಿಗೆ ಹತ್ತು ಗದ್ದಿಗೇ ಕಲ್ಲುಗಳಿದ್ದವು. ಸ್ತಂಭಗಳ ಕೊಂಡಿ ಮತ್ತು ಅಲಂಕಾರದ ಮೇಲಿನ ಕಟ್ಟುಗಳು ಬೆಳ್ಳಿಯದ್ದಾಗಿದ್ದವು.</verse>
				<verse number="13">ಪೂರ್ವದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಅಂಗಳದ ಅಗಲವು ಸುಮಾರು ಇಪ್ಪತ್ತಮೂರು ಮೀಟರವಾಗಿತ್ತು.</verse>
				<verse number="14">ದ್ವಾರದ ಒಂದು ಬದಿಯ ಪರದೆಗಳು ಸುಮಾರು ಆರುವರೆ ಮೀಟರ್ ಉದ್ದವಾಗಿದ್ದವು. ಅವುಗಳಿಗೆ ಮೂರು ಸ್ತಂಭಗಳು, ಆ ಸ್ತಂಭಗಳಿಗೆ ಮೂರು ಗದ್ದಿಗೇ ಕಲ್ಲುಗಳು ಇದ್ದವು.</verse>
				<verse number="15">ಅಂಗಳದ ದ್ವಾರದ ಎರಡೂ ಕಡೆಗಳಲ್ಲಿ ಸುಮಾರು ಆರುವರೆ ಮೀಟರ್ ಉದ್ದವಾದ ಪರದೆಗಳಿದ್ದವು, ಅವುಗಳಿಗೆ ಮೂರು ಸ್ತಂಭಗಳು ಮತ್ತು ಮೂರು ಗದ್ದಿಗೇ ಕಲ್ಲುಗಳಿದ್ದವು.</verse>
				<verse number="16">ಅಂಗಳದ ಸುತ್ತಲಿದ್ದ ಎಲ್ಲ ಪರದೆಗಳು ನಯವಾಗಿ ಹೊಸೆದ ನಾರಿನ ಬಟ್ಟೆಯಿಂದ ಮಾಡಲಾಗಿದ್ದವು.</verse>
				<verse number="17">ಸ್ತಂಭಗಳ ಗದ್ದಿಗೇ ಕಲ್ಲುಗಳು ಕಂಚಿನದ್ದಾಗಿದ್ದವು. ಸ್ತಂಭಗಳ ಕೊಂಡಿಗಳು ಮತ್ತು ಕಟ್ಟುಗಳು ಬೆಳ್ಳಿಯದ್ದಾಗಿದ್ದವು. ಸ್ತಂಭದ ಬೋದಿಗೆಗಳು ಬೆಳ್ಳಿಯಿಂದ ಹೊದಿಸಲಾಗಿತ್ತು. ಅಂಗಳದ ಎಲ್ಲಾ ಸ್ತಂಭಗಳಿಗೆ ಬೆಳ್ಳಿಯ ಕಟ್ಟುಗಳಿದ್ದವು.</verse>
				<verse number="18">ಗುಡಾರದ ಅಂಗಳದ ದ್ವಾರಕ್ಕಾಗಿ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸಮಾಡಿದ ಇಪ್ಪತ್ತು ಮೊಳದ ಪರದೆ ಮಾಡಲಾಗಿತ್ತು. ಅದರ ಉದ್ದವು ಇಪ್ಪತ್ತು ಮೊಳವಾಗಿತ್ತು. ಅಗಲ, ಎತ್ತರಗಳಲ್ಲಿ ಅಂಗಳದ ಉಳಿದ ಪರದೆಗಳಿಗೆ ಸರಿಯಾಗುವಂತೆ ಐದು ಮೊಳ ಇತ್ತು.</verse>
				<verse number="19">ಅವುಗಳಿಗೆ ನಾಲ್ಕು ಸ್ತಂಭಗಳು, ಆ ಕಂಬಗಳಿಗೆ ನಾಲ್ಕು ಕಂಚಿನ ಗದ್ದಿಗೇ ಕಲ್ಲುಗಳಿದ್ದವು. ಅವುಗಳ ಕೊಂಡಿಗಳು ಬೆಳ್ಳಿಯದ್ದಾಗಿದ್ದವು. ಅವುಗಳ ಬೋದಿಗಳ ಹೊದಿಕೆ ಮತ್ತು ಅಲಂಕಾರದ ಪಟ್ಟಿಗಳು ಬೆಳ್ಳಿಯದ್ದಾಗಿದ್ದವು.</verse>
				<verse number="20">ಗುಡಾರದ ಮತ್ತು ಅಂಗಳದ ಸುತ್ತಲೂ ಇರುವ ಎಲ್ಲಾ ಗೂಟಗಳೂ ಕಂಚಿನಿಂದ ಮಾಡಿದ್ದಾಗಿದ್ದವು.</verse>
				<verse number="21">ದೇವದರ್ಶನದ ಗುಡಾರಕ್ಕೆ ಅಂದರೆ ಒಡಂಬಡಿಕೆಯ ನಿಯಮದ ಗುಡಾರ ನಿರ್ಮಾಣಕ್ಕೆ ಬಳಸಿದ ವಸ್ತುಗಳ ಲೆಕ್ಕ ಇವು: ಮೋಶೆಯ ಆಜ್ಞೆಯ ಮೇರೆಗೆ ಯಾಜಕನಾದ ಆರೋನನ ಮಗನಾದ ಈತಾಮಾರನ ನಿರ್ದೇಶನದಲ್ಲಿ ಲೇವಿಯರ ಕೈಯಿಂದ ಲೆಕ್ಕ ಮಾಡಿಸಿದ್ದು.</verse>
				<verse number="22">ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಯೆಹೂದ ಕುಲದವನಾದ ಊರಿಯ ಮಗನೂ ಹೂರನ ಮೊಮ್ಮಗನೂ ಆದ ಬೆಚಲಯೇಲನು ಮಾಡಿದನು.</verse>
				<verse number="23">ಅವನ ಜೊತೆಯಲ್ಲಿ ದಾನ್ ಕುಲದವನಾದ ಅಹೀಸಾಮಾಕನ ಮಗ ಒಹೋಲಿಯಾಬನೂ ಇದ್ದನು. ಇವನು ಕೆತ್ತನೆ ಕೆಲಸ ಮಾಡುವವನೂ ಕುಶಲ ಕೆಲಸಗಾರನೂ ನೀಲಿ, ಧೂಮ್ರ ಮತ್ತು ರಕ್ತವರ್ಣದ ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸ ಮಾಡುವವನೂ ಆಗಿದ್ದನು.</verse>
				<verse number="24">ಪರಿಶುದ್ಧಾಲಯದ ಸೇವೆಗೆ ನೇಮಕವಾದ ಪರಿಶುದ್ಧ ಕೆಲಸಕ್ಕೆ ಉಪಯೋಗಿಸಿದ ಎಲ್ಲಾ ಬಂಗಾರವು ವಿಶೇಷವಾಗಿ ಅರ್ಪಿಸಿದ ಕಾಣಿಕೆಯಾಗಿತ್ತು, ಅದು ಇಪ್ಪತ್ತೊಂಬತ್ತು ತಲಾಂತು ಮತ್ತು ಏಳುನೂರ ಮೂವತ್ತು ಶೆಕೆಲ್ ಇತ್ತು.</verse>
				<verse number="25">ಪರಿಶುದ್ಧಾಲಯದ ನಿಯಮದ ಮೇರೆಗೆ ಸಮೂಹದ ಜನಗಣತಿಯಲ್ಲಿ ದಾಖಲಿಸಿದ ಜನರಿಂದ ಸಂಗ್ರಹಿದ ಬೆಳ್ಳಿಯ ತೂಕವು ಸುಮಾರು 3,400 ಕಿಲೋಗ್ರಾಂ ಇತ್ತು.</verse>
				<verse number="26">ಪರಿಶುದ್ಧಾಲಯದ ನಿಯಮದ ಮೇರೆಗೆ ಪ್ರತಿಯೊಬ್ಬ ಮನುಷ್ಯನಿಂದ ಒಂದೊಂದು “ಬೆಕಾ” ಅಂದರೆ ಅರ್ಧ ಶೆಕೆಲ್ ಆಗಿತ್ತು. ಕೊಟ್ಟವರ ಲೆಕ್ಕವನ್ನು ಇಪ್ಪತ್ತು ವರ್ಷದವರು ಮತ್ತು ಅದಕ್ಕೆ ಮೇಲಿನ ಪ್ರಾಯದವರನ್ನು ಲೆಕ್ಕ ಮಾಡಲಾಗಿ ಅದು 6,03,550 ಗಂಡಸರ ಸಂಖ್ಯೆ ಇತ್ತು.</verse>
				<verse number="27">ಪರಿಶುದ್ಧಾಲಯದ ಗದ್ದಿಗೇ ಕಲ್ಲುಗಳಿಗೆ ಮತ್ತು ಪರದೆಗಳ ಗದ್ದಿಗೇ ಕಲ್ಲುಗಳಿಗೆ ಎರಕ ಹೊಯ್ಯಲು 3,400 ಕಿಲೋಗ್ರಾಂ ಬೆಳ್ಳಿ ಹಿಡಿಯಿತು. ಒಂದು ಗದ್ದಿಗೇ ಕಲ್ಲಿಗೆ ಮೂವತ್ನಾಲ್ಕು ಕಿಲೋಗ್ರಾಂನಂತೆ ನೂರು ಗದ್ದಿಗೇ ಕಲ್ಲುಗಳಿಗೆ 3,400 ಕಿಲೋಗ್ರಾಂ ಬೆಳ್ಳಿ ಆಯಿತು.</verse>
				<verse number="28">ಒಂದರ ತೂಕ ಸುಮಾರು 34 ಕಿಲೋಗ್ರಾಂ ಇತ್ತು. ಅವನು ಕಂಬಗಳಿಗೆ ಕೊಂಡಿಗಳನ್ನೂ ಕಂಬದ ಬೋದಿಗೆ ಮೇಲ್ಹೊದಿಕೆಯನ್ನೂ ಅಲಂಕಾರದ ಪಟ್ಟಿಗಳನ್ನೂ ಮಾಡಿದರು.</verse>
				<verse number="29">ವಿಶೇಷ ಕಾಣಿಕೆಯಾಗಿ ಬಂದ ಕಂಚು 2,425 ಕಿಲೋಗ್ರಾಂ ತೂಕವಿತ್ತು.</verse>
				<verse number="30">ಆ ಕಂಚಿನಿಂದ ಅವರು ದೇವದರ್ಶನದ ಗುಡಾರದ ದ್ವಾರಗಳಿಗೆ ಗದ್ದಿಗೇ ಕಲ್ಲುಗಳನ್ನೂ ಬಲಿಪೀಠವನ್ನೂ ಅದಕ್ಕೆ ಕಂಚಿನ ಜಾಳಿಗೆಯನ್ನೂ ಬಲಿಪೀಠದ ಸಮಸ್ತ ಪಾತ್ರೆಗಳನ್ನೂ ಮಾಡಿದರು.</verse>
				<verse number="31">ಅಂಗಳದ ಸುತ್ತಲಿನ ಗದ್ದಿಗೇ ಕಲ್ಲುಗಳನ್ನೂ, ಗುಡಾರದ ಮತ್ತು ಅಂಗಳದ ಸುತ್ತಲಿನ ಎಲ್ಲಾ ಗೂಟಗಳನ್ನೂ ಮಾಡಿದರು.</verse>
			</chapter>
			<chapter number="39">
				<verse number="1">ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಮೇರೆಗೆ ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಪವಿತ್ರ ಆಲಯದ ಸೇವೆ ಮಾಡುವುದಕ್ಕೆ ಕಲಾತ್ಮಕವಾಗಿ ನೇಯ್ದ ಸೇವಾ ವಸ್ತ್ರಗಳನ್ನು ಮತ್ತು ಆರೋನನಿಗೆ ಪರಿಶುದ್ಧ ವಸ್ತ್ರಗಳನ್ನು ಮಾಡಿದರು.</verse>
				<verse number="2">ಬೆಚಲೇಲನು ಏಫೋದನ್ನು ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರುಬಟ್ಟೆಯನ್ನು ಹೊಸೆದು ಉಪಯೋಗಿಸಿದ್ದರು.</verse>
				<verse number="3">ಅವರು ಬಂಗಾರವನ್ನು ಹೊಡೆದು, ತೆಳುವಾದ ತಗಡುಗಳನ್ನಾಗಿ ಮಾಡಿ, ಅದನ್ನು ಕತ್ತರಿಸಿ ಎಳೆಗಳನ್ನಾಗಿ ಮಾಡಿ, ಆ ಎಳೆಗಳನ್ನು ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸ ಮಾಡುವುದಕ್ಕೆ ಉಪಯೋಗಿಸಿದ್ದರು.</verse>
				<verse number="4">ಆ ಕವಚಕ್ಕೆ ಅದರ ಎರಡೂ ಕೊನೆಗಳನ್ನು ಜೋಡಿಸುವುದಕ್ಕೆ ಎರಡು ಹೆಗಲು ಪಟ್ಟಿಗಳನ್ನು ತಯಾರಿಸಿದ್ದರು.</verse>
				<verse number="5">ಅದರ ಮೇಲಿರುವ ಅದರ ಮೇಲಿರುವ ಕಸೂತಿ ಕೆಲಸದ ಏಫೋದಿನ ನಡುಕಟ್ಟನ್ನು ಒಂದೇ ರೀತಿಯ ವಸ್ತುಗಳಿಂದ ತಯಾರಿಸಬೇಕು ಅಂದರೆ ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಲಾಗಿತ್ತು, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಇತ್ತು.</verse>
				<verse number="6">ಮುದ್ರೆ ಕೆತ್ತುವ ಪ್ರಕಾರ, ಗೋಮೇಧಿಕ ರತ್ನಗಳಲ್ಲಿ ಹನ್ನೆರಡು ಇಸ್ರಾಯೇಲರ ಮಕ್ಕಳ ಹೆಸರುಗಳನ್ನು ಕೆತ್ತಿ ಬಂಗಾರದ ಕುಂದಣದಲ್ಲಿ ಇಟ್ಟರು.</verse>
				<verse number="7">ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ಆ ಎರಡು ರತ್ನಗಳನ್ನು ಏಫೋದಿನ ಹೆಗಲಿನ ಭಾಗದ ಮೇಲೆ ಇಸ್ರಾಯೇಲರ ಜ್ಞಾಪಕಾರ್ಥವಾದ ರತ್ನಗಳಾಗುವಂತೆ ಇಟ್ಟರು.</verse>
				<verse number="8">ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಂದರೆ ಏಫೋದಿನ ಕೆಲಸದ ಹಾಗೆಯೇ ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಿದರು.</verse>
				<verse number="9">ಅದು ಚಚ್ಚೌಕವಾಗಿತ್ತು, ಅದು ಗೇಣು ಉದ್ದ, ಒಂದು ಗೇಣು ಅಗಲ ಮತ್ತು ಇದು ಎರಡು ಪದರುಳ್ಳದ್ದಾಗಿತ್ತು.</verse>
				<verse number="10">ನಂತರ ಅದರಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಜೋಡಿಸಿದರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಪಟಿಕಗಳಿದ್ದವು.</verse>
				<verse number="11">ಎರಡನೆಯ ಸಾಲಿನಲ್ಲಿ ಕೆಂಪರಲು, ನೀಲ ಮತ್ತು ಪಚ್ಚೆಗಳಿದ್ದವು.</verse>
				<verse number="12">ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಗೋಮೇಧಿಕ ಮತ್ತು ಧೂಮ್ರಮಣಿಗಳಿದ್ದವು.</verse>
				<verse number="13">ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಗೋಮೇಧಿಕ, ಸೂರ್ಯಕಾಂತ ಶಿಲೆ ಇವುಗಳನ್ನು ಬಂಗಾರದ ಜವೆಯ ಕಲ್ಲುಗಳಲ್ಲಿ ಸೇರಿಸಲಾಗಿದ್ದವು.</verse>
				<verse number="14">ಆ ರತ್ನಗಳು ಇಸ್ರಾಯೇಲರ ಗೋತ್ರದ ಹೆಸರುಗಳ ಪ್ರಕಾರ ಅವು ಹನ್ನೆರಡಾಗಿದ್ದವು. ಒಂದೊಂದರ ಮೇಲೆ ಒಂದೊಂದು ಹೆಸರಿದ್ದು ಹನ್ನೆರಡು ಗೋತ್ರಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿದವುಗಳಾಗಿದ್ದವು.</verse>
				<verse number="15">ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ಹೆಣೆದ ಕೆಲಸವಾಗಿರುವ ಹುರಿಗಳಂತಿರುವ ಸರಪಣಿಯನ್ನು ಮಾಡಿದರು.</verse>
				<verse number="16">ಬಂಗಾರದ ಆ ಎರಡು ಜವೆಗಳನ್ನು ಮಾಡಿ, ಆ ಎರಡು ಬಳೆಗಳನ್ನು ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿದರು.</verse>
				<verse number="17">ಬಂಗಾರದಿಂದ ಹೆಣೆದ ಆ ಎರಡು ಸರಪಣಿಗಳನ್ನು ಎದೆಪದಕದ ಕೊನೆಗಳಲ್ಲಿರುವ ಎರಡು ಬಳೆಗಳಲ್ಲಿ ಸೇರಿಸಿದರು.</verse>
				<verse number="18">ಆ ಎರಡು ಹೆಣೆದ ಸರಪಣಿಗಳ ಎರಡು ಕೊನೆಗಳನ್ನು ಆ ಎರಡು ಜವೆಗಳಲ್ಲಿ ಸೇರಿಸಿ, ಏಫೋದಿನ ಹೆಗಲು ಭಾಗಗಳ ಮುಂದುಗಡೆ ಇರಿಸಿದರು.</verse>
				<verse number="19">ಬಂಗಾರದ ಎರಡು ಉಂಗುರಗಳನ್ನು ಮಾಡಿ, ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿ ಏಫೋದಿನ ಬದಿಗೆ ಒಳಗಡೆಯಲ್ಲಿ ಹಾಕಿದರು.</verse>
				<verse number="20">ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ, ಏಫೋದಿನ ಮುಂಬದಿಯ ಕೆಳಗಿನ ಎರಡು ಹೆಗಲಿನ ಪಟ್ಟಿಗಳಲ್ಲಿ, ಏಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಿದರು.</verse>
				<verse number="21">ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಆ ಎದೆಪದಕವನ್ನು ಏಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಇರುವಂತೆಯೂ ಎದೆಪದಕವು ಏಫೋದನ್ನು ಬಿಟ್ಟು ಅಲ್ಲಾಡದಂತೆಯೂ ಅದರ ಉಂಗುರಗಳ ಮೂಲಕವಾಗಿ ಏಫೋದಿನ ಉಂಗುರಗಳಿಗೆ ನೀಲಿ ದಾರದಿಂದ ಕಟ್ಟಿದರು.</verse>
				<verse number="22">ಏಫೋದಿನ ನಿಲುವಂಗಿಯನ್ನೆಲ್ಲಾ ನೀಲಿ ಬಣ್ಣದ ಬಟ್ಟೆಯಿಂದ ಮಾಡಿದರು. ಅದು ನೇಕಾರನ ಕೆಲಸವಾಗಿತ್ತು.</verse>
				<verse number="23">ನಿಲುವಂಗಿಯ ರಂದ್ರ, ಕವಚದ ರಂದ್ರದ ಹಾಗೆ ಅದರ ಮಧ್ಯದಲ್ಲಿ ಇತ್ತು. ಅದು ಹರಿಯದ ಹಾಗೆ ಯುದ್ಧದ ಕವಚದೋಪಾದಿಯಲ್ಲಿ ಆ ರಂದ್ರದ ಸುತ್ತಲೂ ನೇಯ್ಗೆ ಪಟ್ಟಿ ಇತ್ತು.</verse>
				<verse number="24">ನಿಲುವಂಗಿಯ ಅಂಚಿನ ಮೇಲೆ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ದಾಳಿಂಬೆ ಹಣ್ಣಿನಂತೆ ಮಾಡಿದರು.</verse>
				<verse number="25">ಶುದ್ಧ ಬಂಗಾರದ ಗಂಟೆಗಳನ್ನು ಮಾಡಿ, ಆ ಗಂಟೆಗಳನ್ನು ದಾಳಿಂಬೆಗಳ ನಡುವೆಯೇ ಇರಿಸಿದರು.</verse>
				<verse number="26">ಒಂದು ಗೆಜ್ಜೆ, ಒಂದು ದಾಳಿಂಬೆಯಂತಿರುವ ಚೆಂಡನ್ನು ಒಂದಾದ ಮೇಲೆ ಒಂದು ಸೇವೆಗೋಸ್ಕರ ಮಾಡಿದ ಮೇಲಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅದು ಇತ್ತು.</verse>
				<verse number="27">ಆರೋನನಿಗೆ ಹಾಗೂ ಅವನ ಮಕ್ಕಳಿಗೆ ನಯವಾದ ನಾರಿನಿಂದ ಹೊಸೆದ ಕೆಲಸದಿಂದ ಮಾಡಿದ ಮೇಲಂಗಿಗಳನ್ನೂ</verse>
				<verse number="28">ನಯವಾದ ನಾರಿನಿಂದ ಮಾಡಿದ ಮುಂಡಾಸವನ್ನೂ ಸೌಂದರ್ಯವುಳ್ಳ ನಾರಿನ ಕುಲಾವಿಗಳನ್ನೂ ಹೊಸೆದ ನಯವಾದ ನಾರುಗಳಿಂದ ಮಾಡಿದ ಒಳಉಡುಪುಗಳನ್ನೂ</verse>
				<verse number="29">ನಯವಾದ ನಾರಿನಿಂದ ಹೊಸೆದ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಹೆಣಿಗೆಯ ಕೆಲಸದಿಂದ ನಡುಕಟ್ಟನ್ನೂ ಮಾಡಿದರು. ಇವುಗಳನ್ನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.</verse>
				<verse number="30">ಶುದ್ಧ ಬಂಗಾರದಿಂದ ಪರಿಶುದ್ಧ ಕಿರೀಟದ ತಗಡನ್ನು ಮಾಡಿ, ಮುದ್ರೆ ಕೆತ್ತುವ ಪ್ರಕಾರ ಅದರಲ್ಲಿ, “ಯೆಹೋವ ದೇವರಿಗೆ ಪರಿಶುದ್ಧ,” ಎಂದು ಕೆತ್ತಿಸಿದರು,</verse>
				<verse number="31">ಅದು ಮುಂಡಾಸದ ಮುಂಭಾಗದಲ್ಲಿರುವಂತೆ ಅದನ್ನು ನೀಲಿ ದಾರಿನಿಂದ ಕಟ್ಟಿಸಿದರು. ಇದನ್ನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಮಾಡಿದರು.</verse>
				<verse number="32">ಈ ಪ್ರಕಾರ ದೇವದರ್ಶನದ ಗುಡಾರದ ಕೆಲಸವೆಲ್ಲಾ ಮುಗಿಯಿತು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲರು ಅದರಂತೆಯೇ ಮಾಡಿದರು.</verse>
				<verse number="33">ಆಗ ಅವರು ದೇವದರ್ಶನದ ಗುಡಾರವನ್ನು ಮೋಶೆಯ ಬಳಿಗೆ ತಂದರು. ಅದರ ಮೇಲ್ಹೊದಿಕೆಯನ್ನು, ಅದರ ಎಲ್ಲಾ ಸಲಕರಣೆಗಳನ್ನು ಅದರ ಕೊಂಡಿಗಳನ್ನು, ಅದರ ಚೌಕಟ್ಟುಗಳನ್ನು, ಅದರ ಅಗುಳಿಗಳನ್ನು, ಅದರ ಸ್ತಂಭಗಳನ್ನು, ಅದರ ಕುಣಿಕೆಗಳನ್ನು,</verse>
				<verse number="34">ಕೆಂಪು ಬಣ್ಣದಲ್ಲಿ ಅದ್ದಿದ ಟಗರುಗಳ ಹೊದಿಕೆಯನ್ನು, ಕಡಲುಹಂದಿಗಳ ಚರ್ಮಗಳ ಹೊದಿಕೆಗಳನ್ನು, ಮರೆಮಾಡುವ ಪರದೆಯನ್ನು,</verse>
				<verse number="35">ಒಡಂಬಡಿಕೆಯ ಮಂಜೂಷನ್ನು, ಅದರ ಕೋಲುಗಳನ್ನು, ಕರುಣಾಸನವನ್ನು,</verse>
				<verse number="36">ಮೇಜನ್ನು, ಅದರ ಎಲ್ಲಾ ಉಪಕರಣಗಳನ್ನು, ನೈವೇದ್ಯದ ರೊಟ್ಟಿಯನ್ನು,</verse>
				<verse number="37">ಶುದ್ಧವಾದ ದೀಪಸ್ತಂಭವನ್ನು, ಅದರ ದೀಪಗಳನ್ನು, ಕ್ರಮವಾಗಿಡುವ ದೀಪಗಳನ್ನು, ಅದರ ಉಪಕರಣಗಳನ್ನು, ದೀಪಸ್ತಂಭಕ್ಕಾಗಿ ಎಣ್ಣೆಯನ್ನು,</verse>
				<verse number="38">ಚಿನ್ನದ ಬಲಿಪೀಠವನ್ನು, ಅಭಿಷೇಕಿಸುವ ತೈಲವನ್ನು, ಪರಿಮಳ ಧೂಪವನ್ನು, ಗುಡಾರದ ಬಾಗಿಲಿನ ಪರದೆಯನ್ನು,</verse>
				<verse number="39">ಬಲಿಪೀಠವನ್ನು, ಅದರೊಂದಿಗೆ ಕಂಚಿನ ಜಾಳಿಗೆಯನ್ನು, ಅದರ ಕೋಲುಗಳನ್ನು, ಅದರ ಎಲ್ಲಾ ಉಪಕರಣಗಳನ್ನು, ಕಂಚಿನ ಗಂಗಾಳವನ್ನು, ಅದರ ಕಾಲನ್ನು,</verse>
				<verse number="40">ದೇವದರ್ಶನದ ಗುಡಾರ ಅಂಗಳದ ಪರದೆಗಳನ್ನು, ಅದರ ಸ್ತಂಭಗಳನ್ನು, ಅದರ ಗದ್ದಿಗೇ ಕಲ್ಲುಗಳನ್ನು, ಅಂಗಳದ ಬಾಗಿಲಿನ ಪರದೆಗಳನ್ನು, ಅದರ ಹಗ್ಗಗಳನ್ನು, ಗುಡಾರದ ಗೂಟಗಳನ್ನು, ಸಭೆಯ ದೇವದರ್ಶನದ ಗುಡಾರಕ್ಕೆ ಬೇಕಾದ ಎಲ್ಲಾ ವಸ್ತುಗಳನ್ನು,</verse>
				<verse number="41">ಪರಿಶುದ್ಧಸ್ಥಳದ ಸೇವೆಗೋಸ್ಕರ ನೇಯ್ದ ಪರಿಶುದ್ಧ ವಸ್ತ್ರಗಳನ್ನು ಅಂದರೆ ಸೇವೆಮಾಡುವದಕ್ಕೆ ಯಾಜಕನಾದ ಆರೋನನಿಗೆ ಮತ್ತು ಅವನ ಪುತ್ರರಿಗೆ ಯಾಜಕವಸ್ತ್ರಗಳನ್ನು ತಂದರು.</verse>
				<verse number="42">ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಇಸ್ರಾಯೇಲರು ಈ ಕೆಲಸಗಳನ್ನೆಲ್ಲಾ ಮಾಡಿದರು.</verse>
				<verse number="43">ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ, ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆದ್ದರಿಂದ ಮೋಶೆಯು ಅವರನ್ನು ಆಶೀರ್ವದಿಸಿದನು.</verse>
			</chapter>
			<chapter number="40">
				<verse number="1">ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,</verse>
				<verse number="2">“ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಭೆಯ ಡೇರೆಯನ್ನು ಮತ್ತು ಗುಡಾರವನ್ನು ಎತ್ತಿ ನಿಲ್ಲಿಸು.</verse>
				<verse number="3">ಒಡಂಬಡಿಕೆಯ ಮಂಜೂಷವನ್ನು ಅದರಲ್ಲಿ ಇಟ್ಟು, ಅದನ್ನು ನೀನು ಪರದೆಯಿಂದ ಮುಚ್ಚಬೇಕು.</verse>
				<verse number="4">ಮೇಜನ್ನು ಒಳಗೆ ತಂದು, ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು. ದೀಪಸ್ತಂಭವನ್ನು ಒಳಗೆ ತಂದು, ನೀನು ಅದರ ದೀಪಗಳನ್ನು ಅಂಟಿಸಬೇಕು.</verse>
				<verse number="5">ನೀನು ಮಾಡಿದ ಚಿನ್ನದ ಧೂಪಪೀಠವನ್ನು ಒಡಂಬಡಿಕೆಯ ಮಂಜೂಷದ ಎದುರಾಗಿ ಇಟ್ಟು, ದೇವದರ್ಶನದ ಗುಡಾರದ ಬಾಗಿಲಿಗೆ ಪರದೆಯನ್ನು ಹಾಕಬೇಕು.</verse>
				<verse number="6">“ನೀನು ದಹನಬಲಿಯ ಪೀಠವನ್ನು ಸಭೆಯ ಡೇರೆಯಾದ ಗುಡಾರದ ಬಾಗಿಲಿಗೆ ಎದುರಾಗಿ ಇಡಬೇಕು.</verse>
				<verse number="7">ನೀನು ದೇವದರ್ಶನದ ಗುಡಾರಕ್ಕೂ, ಬಲಿಪೀಠಕ್ಕೂ ಮಧ್ಯದಲ್ಲಿ ಗಂಗಾಳವನ್ನಿಟ್ಟು, ಅದರಲ್ಲಿ ನೀರನ್ನು ತುಂಬಿಸಬೇಕು.</verse>
				<verse number="8">ಅದರ ಸುತ್ತಲೂ ಆವರಣವನ್ನು ನಿಲ್ಲಿಸಿ, ಆ ಆವರಣದ ಬಾಗಿಲಿನ ಬಳಿಯಲ್ಲಿ ನೀನು ಪರದೆಯನ್ನು ತೂಗು ಹಾಕಬೇಕು.</verse>
				<verse number="9">“ನೀನು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ, ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ, ಅದರಲ್ಲಿರುವ ಎಲ್ಲಾ ಸಾಮಗ್ರಿಗಳನ್ನೂ ಪರಿಶುದ್ಧ ಮಾಡು. ಆಗ ಅದು ಪರಿಶುದ್ಧವಾಗುವುದು.</verse>
				<verse number="10">ದಹನಬಲಿಯ ಪೀಠವನ್ನೂ, ಅದರ ಎಲ್ಲಾ ಸಲಕರಣೆಗಳನ್ನೂ ನೀನು ಅಭಿಷೇಕಿಸಿ, ಬಲಿಪೀಠವನ್ನು ಪವಿತ್ರಮಾಡು. ಆಗ ಅದು ಅತಿಪರಿಶುದ್ಧವಾದ ಬಲಿಪೀಠವಾಗುವುದು.</verse>
				<verse number="11">ಗಂಗಾಳವನ್ನೂ, ಅದರ ಕಾಲುಗಳನ್ನೂ ನೀನು ಅಭಿಷೇಕಿಸಿ, ಅದನ್ನು ಪ್ರತಿಷ್ಠಾಪನೆ ಮಾಡಬೇಕು.</verse>
				<verse number="12">“ಆರೋನನನ್ನೂ, ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿನ ಬಳಿಗೆ ಬರಮಾಡಿ, ಅವರನ್ನು ನೀರಿನಿಂದ ಸ್ನಾನ ಮಾಡಿಸಬೇಕು.</verse>
				<verse number="13">ಆರೋನನು ನನಗೆ ಯಾಜಕ ಸೇವೆ ಮಾಡುವ ಹಾಗೆ ಅವನಿಗೆ ಪರಿಶುದ್ಧ ವಸ್ತ್ರಗಳನ್ನು ತೊಡಿಸಿ, ಅವನನ್ನು ಅಭಿಷೇಕಿಸಿ, ಅವನನ್ನು ಶುದ್ಧಮಾಡಬೇಕು.</verse>
				<verse number="14">ಅವನ ಪುತ್ರರನ್ನು ನೀನು ಬರಮಾಡಿಕೊಂಡು, ಅವರಿಗೆ ಅಂಗಿಗಳನ್ನು ತೊಡಿಸಿ,</verse>
				<verse number="15">ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ, ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವರನ್ನೂ ನೀನು ಅಭಿಷೇಕಿಸು. ಅವರ ಈ ಅಭಿಷೇಕದಿಂದ ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವುದು,” ಎಂದು ಹೇಳಿದರು.</verse>
				<verse number="16">ಮೋಶೆಯು ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರವೇ ಅವನು ಎಲ್ಲವನ್ನು ಮಾಡಿದನು.</verse>
				<verse number="17">ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಗುಡಾರವು ಎದ್ದುನಿಂತಿತು.</verse>
				<verse number="18">ಆಗ ಮೋಶೆಯು ಗುಡಾರವನ್ನು ನಿಲ್ಲಿಸಿ, ಅದರ ಕಾಲುಗಳನ್ನು ಬಿಗಿದು, ಅದರ ಚೌಕಟ್ಟುಗಳನ್ನು ಇರಿಸಿ, ಅಗುಳಿಗಳನ್ನು ಹಾಕಿ, ಅದರ ಸ್ತಂಭಗಳನ್ನು ನಿಲ್ಲಿಸಿದನು.</verse>
				<verse number="19">ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಗುಡಾರದ ಮೇಲೆ ಡೇರೆಯನ್ನು ಹರಡಿಸಿ, ಡೇರೆಯ ಹೊದಿಕೆಯನ್ನು ಅದರ ಮೇಲೆ ಹಾಕಿದನು.</verse>
				<verse number="20">ಅವನು ಆಜ್ಞಾಶಾಸನಗಳನ್ನು ತೆಗೆದುಕೊಂಡು ಮಂಜೂಷದ ಪೆಟ್ಟಿಗೆಯಲ್ಲಿಟ್ಟು, ಮಂಜೂಷಕ್ಕೆ ಕೋಲುಗಳನ್ನು ಸೇರಿಸಿ, ಮಂಜೂಷದ ಮೇಲೆ ಕರುಣಾಸನವನ್ನು ಇಟ್ಟನು.</verse>
				<verse number="21">ಅವನು ಮಂಜೂಷವನ್ನು ಗುಡಾರಕ್ಕೆ ತಂದು, ಮರೆಮಾಡುವ ಪರದೆಯನ್ನಿರಿಸಿ, ಒಡಂಬಡಿಕೆಯ ಮಂಜೂಷವನ್ನು ಮರೆಮಾಡಿದನು. ಯೆಹೋವ ದೇವರು ಆಜ್ಞಾಪಿಸಿದ ಹಾಗೆಯೇ ಮೋಶೆಯು ಮಾಡಿದನು.</verse>
				<verse number="22">ಅನಂತರ ಮೋಶೆ ದೇವದರ್ಶನದ ಗುಡಾರದ ಉತ್ತರ ಭಾಗದಲ್ಲಿ, ಪರದೆಯ ಹೊರಗೆ ಮೇಜನ್ನು ಇಟ್ಟನು.</verse>
				<verse number="23">ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ರೊಟ್ಟಿಯನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಕ್ರಮವಾಗಿ ಇಟ್ಟನು.</verse>
				<verse number="24">ದೇವದರ್ಶನದ ಗುಡಾರದಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇಟ್ಟನು.</verse>
				<verse number="25">ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಯೆಹೋವ ದೇವರ ಸನ್ನಿಧಿಯಲ್ಲಿ ದೀಪಗಳನ್ನು ಇರಿಸಿದನು.</verse>
				<verse number="26">ಚಿನ್ನದ ಧೂಪವೇದಿಯನ್ನು ದೇವದರ್ಶನದ ಗುಡಾರದಲ್ಲಿ ಪರದೆಯ ಮುಂದೆ ಇಟ್ಟನು.</verse>
				<verse number="27">ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ಅದರ ಮೇಲೆ ಪರಿಮಳ ಧೂಪವನ್ನು ಸುಟ್ಟನು.</verse>
				<verse number="28">ಗುಡಾರದ ಬಾಗಿಲಿನ ಪರದೆಯನ್ನು ತೂಗುಹಾಕಿದನು.</verse>
				<verse number="29">ದೇವದರ್ಶನದ ಗುಡಾರದ ಬಳಿಯಲ್ಲಿ ದಹನಬಲಿಯ ಪೀಠವನ್ನು ಇಟ್ಟನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಬಲಿಪೀಠ ಇಟ್ಟು ಅದರ ಮೇಲೆ ದಹನಬಲಿ ಮತ್ತು ಧಾನ್ಯ ಸಮರ್ಪಣೆಯನ್ನೂ ಅರ್ಪಿಸಿದನು.</verse>
				<verse number="30">ದೇವದರ್ಶನದ ಗುಡಾರಕ್ಕೂ, ಬಲಿಪೀಠಕ್ಕೂ ಮಧ್ಯ ಗಂಗಾಳವನ್ನು ಇಟ್ಟು, ಅದರಲ್ಲಿ ತೊಳೆಯುವುದಕ್ಕೆ ನೀರನ್ನು ತುಂಬಿಸಿದನು.</verse>
				<verse number="31">ಮೋಶೆಯೂ, ಆರೋನನೂ, ಅವನ ಪುತ್ರರೂ ಅದರಲ್ಲಿ ಕೈಕಾಲುಗಳನ್ನು ತೊಳೆದುಕೊಂಡರು.</verse>
				<verse number="32">ಅವರು ದೇವದರ್ಶನದ ಗುಡಾರದ ಒಳಗೆ ಸೇರುವ ಸಮಯದಲ್ಲಿಯೂ, ಬಲಿಪೀಠದ ಸಮೀಪಕ್ಕೆ ಬರುವ ಸಮಯದಲ್ಲಿಯೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ ಅವರು ಸ್ನಾನ ಮಾಡಿದರು.</verse>
				<verse number="33">ಮೋಶೆಯು ಗುಡಾರಕ್ಕೂ, ಬಲಿಪೀಠಕ್ಕೂ ಸುತ್ತಲೂ ಅಂಗಳವನ್ನು ನಿಲ್ಲಿಸಿ, ಅಂಗಳದ ಬಾಗಿಲಿನ ಪರದೆಯನ್ನು ತೂಗುಹಾಕಿದನು. ಈ ಪ್ರಕಾರ ಮೋಶೆಯು ಆ ಕೆಲಸವನ್ನು ತೀರಿಸಿದನು.</verse>
				<verse number="34">ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿಕೊಂಡು, ಯೆಹೋವ ದೇವರ ಮಹಿಮೆಯು ದೇವದರ್ಶನದ ಗುಡಾರವನ್ನು ತುಂಬಿಕೊಂಡಿತು.</verse>
				<verse number="35">ದೇವದರ್ಶನದ ಗುಡಾರದ ಮೇಲೆ ಮೇಘವು ನೆಲೆಯಾಗಿದ್ದದರಿಂದಲೂ, ಯೆಹೋವ ದೇವರು ಮಹಿಮೆಯು ದೇವದರ್ಶನದ ಗುಡಾರವನ್ನು ತುಂಬಿದ್ದರಿಂದಲೂ, ಮೋಶೆಯು ಒಳಗೆ ಪ್ರವೇಶಿಸಲಾರದೆ ಇದ್ದನು.</verse>
				<verse number="36">ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ, ಇಸ್ರಾಯೇಲರು ತಮ್ಮ ಪ್ರಯಾಣಕ್ಕಾಗಿ ಮುಂದೆ ಹೊರಡುತ್ತಿದ್ದರು.</verse>
				<verse number="37">ಆದರೆ ಮೇಘವು ಮೇಲಕ್ಕೆ ಎತ್ತದೇ ಇರುವಾಗ ಅದು ಎತ್ತುವ ದಿವಸದವರೆಗೆ ಅವರು ಪ್ರಯಾಣ ಮಾಡಲಿಲ್ಲ.</verse>
				<verse number="38">ಏಕೆಂದರೆ ಇಸ್ರಾಯೇಲರ ಎಲ್ಲಾ ಪ್ರಯಾಣಗಳಲ್ಲಿ ಅವರ ಕಣ್ಣುಗಳ ಮುಂದೆ ಹಗಲಿನಲ್ಲಿ ಯೆಹೋವ ದೇವರ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಮೇಘದೊಳಗೆ ಅಗ್ನಿಯು ಪ್ರಕಾಶಿಸುತ್ತಿತ್ತು.</verse>
			</chapter>
		</book>
		<book number="3">
			<chapter number="1">
				<verse number="1">ಯೆಹೋವ ದೇವರು ಮೋಶೆಯನ್ನು ಕರೆದು, ದೇವದರ್ಶನದ ಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ,</verse>
				<verse number="2">ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನಂದರೆ: “ ‘ನಿಮ್ಮಲ್ಲಿ ಯಾರಾದರೂ ಯೆಹೋವ ದೇವರಿಗೆ ಒಂದು ಪ್ರಾಣಿಯನ್ನು ಕಾಣಿಕೆಯಾಗಿ ಸಮರ್ಪಿಸಲು ಆಶಿಸಿದರೆ, ಅದನ್ನು ದನಕರುಗಳಿಂದಾಗಲಿ, ಆಡು ಕುರಿಗಳಿಂದಾಗಲಿ ಆಯ್ದುಕೊಂಡು ಸಮರ್ಪಿಸಲಿ.</verse>
				<verse number="3">“ ‘ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ, ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಯೆಹೋವ ದೇವರಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.</verse>
				<verse number="4">ದಹನಬಲಿ ಅರ್ಪಿಸುವವನು ತನ್ನ ಕೈಯನ್ನು ಆ ಪ್ರಾಣಿಯ ತಲೆಯ ಮೇಲೆ ಇಡಬೇಕು. ಹೀಗೆ ಅದು ಅವನಿಗೋಸ್ಕರ ಅವನ ಪ್ರಾಯಶ್ಚಿತ್ತಕ್ಕಾಗಿ ಅಂಗೀಕಾರವಾಗುವುದು.</verse>
				<verse number="5">ಅವನು ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು. ಆಗ ಯಾಜಕರಾದ ಆರೋನನ ಪುತ್ರರು ರಕ್ತವನ್ನು ತಂದು, ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ಬಲಿಪೀಠದ ಸುತ್ತಲೂ ಚಿಮುಕಿಸಬೇಕು.</verse>
				<verse number="6">ಅವನು ಆ ದಹನಬಲಿಯ ಚರ್ಮವನ್ನು ಸುಲಿದು, ಅದರ ದೇಹವನ್ನು ಕಡಿದು, ತುಂಡುತುಂಡಾಗಿ ಮಾಡಬೇಕು.</verse>
				<verse number="7">ಯಾಜಕನಾದ ಆರೋನನ ಪುತ್ರರು ಬಲಿಪೀಠದ ಮೇಲೆ ಕ್ರಮವಾಗಿ ಕಟ್ಟಿಗೆಯನ್ನು ಇಡಬೇಕು.</verse>
				<verse number="8">ಆಗ ಯಾಜಕರಾದ ಆರೋನನ ಪುತ್ರರು ಅದರ ಭಾಗಗಳನ್ನು ಅಂದರೆ, ತಲೆಯನ್ನೂ ಮತ್ತು ಕೊಬ್ಬನ್ನೂ ಬಲಿಪೀಠದ ಮೇಲೆ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.</verse>
				<verse number="9">ಅದರ ಕರುಳುಗಳನ್ನೂ, ಕಾಲುಗಳನ್ನೂ ಅವರು ನೀರಿನಲ್ಲಿ ತೊಳೆಯಬೇಕು. ಯಾಜಕನು ಎಲ್ಲವನ್ನೂ ಬಲಿಪೀಠದ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ, ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.</verse>
				<verse number="10">“ ‘ದಹನಬಲಿಗೋಸ್ಕರ ತನ್ನ ಕಾಣಿಕೆಯು ಮಂದೆಯಿಂದ ತರುವುದಾದರೆ ಅವನು ಕುರಿಗಳಲ್ಲಾಗಲಿ, ಮೇಕೆಗಳಲ್ಲಾಗಲಿ, ಕಳಂಕರಹಿತ ಒಂದು ಗಂಡನ್ನು ತರಬೇಕು.</verse>
				<verse number="11">ಅವನು ಅದನ್ನು ಬಲಿಪೀಠದ ಉತ್ತರದ ಕಡೆಯಲ್ಲಿ ಯೆಹೋವ ದೇವರ ಮುಂದೆ ವಧಿಸಬೇಕು. ಇದಲ್ಲದೆ ಯಾಜಕರಾದ ಆರೋನನ ಪುತ್ರರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.</verse>
				<verse number="12">ಅರ್ಪಿಸುವವನು ಆ ಪ್ರಾಣಿಯ ದೇಹವನ್ನು ತುಂಡುತುಂಡಾಗಿ ಕಡಿದ ಮೇಲೆ, ಯಾಜಕನು ಆ ತುಂಡುಗಳನ್ನೂ, ತಲೆಯನ್ನೂ, ಕೊಬ್ಬನ್ನೂ ಬಲಿಪೀಠದ ಮೇಲಿನ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.</verse>
				<verse number="13">ಕರುಳುಗಳನ್ನೂ ಕಾಲುಗಳನ್ನೂ ನೀರಿನಿಂದ ತೊಳೆಯಬೇಕು. ಆಗ ಯಾಜಕನು ಅವೆಲ್ಲವುಗಳನ್ನೂ ತಂದು ಬಲಿಪೀಠದ ಮೇಲೆ ಸುಡಬೇಕು. ಬೆಂಕಿಯಿಂದ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.</verse>
				<verse number="14">“ ‘ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವಂಥದ್ದು ಪಕ್ಷಿಗಳಾಗಿದ್ದರೆ, ಅವನು ತನ್ನ ಯಜ್ಞಕ್ಕಾಗಿ ಬೆಳವಕ್ಕಿಯನ್ನಾಗಲಿ ಇಲ್ಲವೆ ಪಾರಿವಾಳದ ಮರಿಯನ್ನಾಗಲಿ ತರಬೇಕು.</verse>
				<verse number="15">ಆಗ ಯಾಜಕನು ಅದನ್ನೂ ಬಲಿಪೀಠದ ಬಳಿಗೆ ತಂದು ಅದರ ತಲೆಯನ್ನು ಮುರಿದು, ಬಲಿಪೀಠದ ಮೇಲೆ ಸುಡಬೇಕು. ಅದರ ರಕ್ತವನ್ನು ಬಲಿಪೀಠದ ಹೊರಬದಿಯಲ್ಲಿ ಹಿಂಡಬೇಕು.</verse>
				<verse number="16">ಇದಲ್ಲದೆ ಅವನು ಅದರ ರೆಕ್ಕೆ ಪುಕ್ಕಗಳೊಂದಿಗೆ ಕರುಳುಗಳನ್ನೂ ಕಿತ್ತು, ಬಲಿಪೀಠದ ಬಳಿ ಪೂರ್ವ ಭಾಗದಲ್ಲಿ ಬೂದಿಯಿರುವ ಸ್ಥಳದಲ್ಲಿ ಬಿಸಾಡಬೇಕು.</verse>
				<verse number="17">ಅವನು ಅದನ್ನು ರೆಕ್ಕೆಗಳೊಂದಿಗೆ ಹರಿಯಬೇಕು. ಆದರೆ ಬೇರೆಬೇರೆಯಾಗಿ ವಿಭಾಗಿಸಬಾರದು. ಆಗ ಯಾಜಕನು ಅದನ್ನು ಬಲಿಪೀಠದ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ಸಮರ್ಪಿಸುವ ದಹನಬಲಿ ಯೆಹೋವ ದೇವರಿಗೆ ಸುವಾಸನೆಯಾಗುವಂತೆ ಸುಡಬೇಕು.</verse>
			</chapter>
			<chapter number="2">
				<verse number="1">“ ‘ಯಾರಾದರೂ ಯೆಹೋವ ದೇವರಿಗೆ ಧಾನ್ಯ ಸಮರ್ಪಣೆಯನ್ನು ಸಮರ್ಪಿಸುವುದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಸಬೇಕು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.</verse>
				<verse number="2">ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಪುತ್ರರ ಬಳಿಗೆ ತರಬೇಕು. ಅವನು ಹಿಟ್ಟಿನಲ್ಲಿಯೂ, ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜಕನು ಅದನ್ನು ಜ್ಞಾಪಕಾರ್ಥವಾಗಿ ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.</verse>
				<verse number="3">ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.</verse>
				<verse number="4">“ ‘ನೀನು ಒಲೆಯಲ್ಲಿ ಸುಟ್ಟ ಧಾನ್ಯ ಸಮರ್ಪಣೆಯನ್ನು ಕಾಣಿಕೆಯಾಗಿ ತರುವುದಾದರೆ, ಅದು ಹುಳಿಯಿಲ್ಲದ ಮತ್ತು ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು.</verse>
				<verse number="5">ನಿನ್ನ ಕಾಣಿಕೆಯು ಬೋಗುಣಿಯಲ್ಲಿ ಬೇಯಿಸಿದ ಧಾನ್ಯ ಸಮರ್ಪಣೆಯಾಗಿದ್ದರೆ, ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು.</verse>
				<verse number="6">ನೀನು ಅದನ್ನು ತುಂಡುಗಳನ್ನಾಗಿ ವಿಭಾಗಿಸಿ, ಅದರ ಮೇಲೆ ಎಣ್ಣೆ ಸುರಿಯಬೇಕು, ಅದು ಆಹಾರ ಸಮರ್ಪಣೆಯಾಗಿದೆ.</verse>
				<verse number="7">ನಿನ್ನ ಕಾಣಿಕೆಯು ತವೆಯಲ್ಲಿ ಬೇಯಿಸಿದ ಧಾನ್ಯವಾಗಿದ್ದರೆ, ಅದು ನಯವಾದ ಎಣ್ಣೆಯಿಂದ ಕೂಡಿದ ಹಿಟ್ಟಿನಿಂದ ಮಾಡಿದ್ದಾಗಿರಬೇಕು.</verse>
				<verse number="8">ನೀನು ಇವುಗಳಿಂದ ಮಾಡಿದ ಧಾನ್ಯ ಸಮರ್ಪಣೆಯನ್ನು ಯೆಹೋವ ದೇವರಿಗೆ ತರಬೇಕು. ಅದು ಯಾಜಕನಿಗೆ ಒಪ್ಪಿಸಿದಾಗ, ಅವನು ಅದನ್ನು ಬಲಿಪೀಠದ ಬಳಿಗೆ ತರುವನು.</verse>
				<verse number="9">ಆಗ ಯಾಜಕನು ಅದರಿಂದ ಜ್ಞಾಪಕಾರ್ಥವಾಗಿ ಧಾನ್ಯ ಸಮರ್ಪಣೆಯನ್ನಾಗಿ ತೆಗೆದುಕೊಂಡು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು, ಯೆಹೋವ ದೇವರಿಗೆ ಸುವಾಸನೆಯ ಸಮರ್ಪಣೆಯಾಗಿರುವುದು.</verse>
				<verse number="10">ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.</verse>
				<verse number="11">“ ‘ಯೆಹೋವ ದೇವರಿಗೆ ನೀನು ತರುವ ಧಾನ್ಯ ಸಮರ್ಪಣೆಯು ಯಾವುದೂ ಹುಳಿಯಿಂದ ಮಾಡಿದ್ದಾಗಿರಬಾರದು. ಏಕೆಂದರೆ ಯೆಹೋವ ದೇವರಿಗೆ ನೀವು ಬೆಂಕಿಯಿಂದ ಮಾಡುವ ಯಾವ ಸಮರ್ಪಣೆಯಲ್ಲಿ ಹುಳಿಯನ್ನಾಗಲಿ, ಜೇನನ್ನಾಗಲಿ ಬೆರೆಸಬಾರದು.</verse>
				<verse number="12">ಪ್ರಥಮ ಫಲದ ಕಾಣಿಕೆಯ ವಿಷಯದಲ್ಲಿಯಾದರೋ ನೀವು ಅವುಗಳನ್ನು ಯೆಹೋವ ದೇವರಿಗೆ ಸಮರ್ಪಿಸಬೇಕು. ಆದರೆ ಅವುಗಳನ್ನು ಬಲಿಪೀಠದ ಮೇಲೆ ಸುವಾಸನೆಗಾಗಿ ಸುಡಬಾರದು.</verse>
				<verse number="13">ನಿನ್ನ ಪ್ರತಿಯೊಂದು ಧಾನ್ಯ ಸಮರ್ಪಣೆಯೂ ಉಪ್ಪಿನಲ್ಲಿ ಬೆರಕೆಯಾಗಿರಬೇಕು. ನಿನ್ನ ದೇವರ ಒಡಂಬಡಿಕೆಯ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು. ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.</verse>
				<verse number="14">“ ‘ನೀನು ನಿನ್ನ ಪ್ರಥಮ ಫಲಗಳ ಧಾನ್ಯ ಸಮರ್ಪಣೆಯನ್ನು ಯೆಹೋವ ದೇವರಿಗೆ ಮಾಡಿದರೆ, ನಿನ್ನ ಪ್ರಥಮ ಫಲ ಧಾನ್ಯ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸಬೇಕು.</verse>
				<verse number="15">ನೀನು ಅದರ ಮೇಲೆ ಎಣ್ಣೆಯನ್ನು ಸಾಂಬ್ರಾಣಿಯನ್ನು ಹಾಕು. ಇದೇ ಧಾನ್ಯ ಸಮರ್ಪಣೆ.</verse>
				<verse number="16">ಯಾಜಕನು ಬಡಿದ ಕಾಳುಗಳಲ್ಲಿ ಕೆಲವು ಭಾಗವನ್ನು ಅದರ ಜೊತೆಯಲ್ಲಿ ಎಲ್ಲಾ ಸಾಂಬ್ರಾಣಿಯನ್ನು ಜ್ಞಾಪಕಾರ್ಥವಾಗಿ ಸುಡಬೇಕು. ಇದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯಾಗಿದೆ.</verse>
			</chapter>
			<chapter number="3">
				<verse number="1">“ ‘ಯಾರಾದರು ಸಮಾಧಾನ ಸಮರ್ಪಣೆಗಾಗಿ ಬಲಿದಾನ ಮಾಡಬೇಕಾದರೆ, ಅಂಥವನು ಸಮರ್ಪಿಸುವ ಪ್ರಾಣಿ ದನಕರುವಾಗಿದ್ದಲ್ಲಿ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ ಯೆಹೋವ ದೇವರ ದೃಷ್ಟಿಯಲ್ಲಿ ಕಳಂಕರಹಿತವಾಗಿರಬೇಕು.</verse>
				<verse number="2">ಅವನು ಅರ್ಪಿಸಬೇಕಾದ ಆ ಪ್ರಾಣಿಯನ್ನು ಯೆಹೋವ ದೇವರ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈ ಇಡಬೇಕು. ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.</verse>
				<verse number="3">ಅವನು ಸಮಾಧಾನದ ಕಾಣಿಕೆಯ ಯಜ್ಞಾರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ,</verse>
				<verse number="4">ಎರಡು ಮೂತ್ರ ಜನಕಾಂಗಗಳನ್ನೂ, ಪಕ್ಕೆಯ ಬದಿಯಲ್ಲಿಯ ಅವುಗಳ ಮೇಲಿರುವ ಕೊಬ್ಬನ್ನೂ, ಮೂತ್ರ ಜನಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಯೆಹೋವ ದೇವರಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು.</verse>
				<verse number="5">ಆರೋನನ ಪುತ್ರರು ಅದನ್ನು ಬಲಿಪೀಠದಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನಬಲಿಯಾಗಿ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು, ಯೆಹೋವ ದೇವರಿಗೆ ಸುವಾಸನೆಯಾಗಿರುವುದು.</verse>
				<verse number="6">“ ‘ಅವನ ಕಾಣಿಕೆಯು ಸಮಾಧಾನದ ಬಲಿಯಾಗಿ, ಅದು ಯೆಹೋವ ದೇವರಿಗೆ ತನ್ನ ಆಡುಕುರಿಗಳಿಂದಾದ ಕಾಣಿಕೆಯಾಗಿದ್ದರೆ, ಗಂಡಾಗಲಿ, ಹೆಣ್ಣಾಗಲಿ ಕಳಂಕರಹಿತವಾದದ್ದನ್ನು ಅವನು ಸಮರ್ಪಿಸಬೇಕು.</verse>
				<verse number="7">ಅವನು ಕುರಿಮರಿಯನ್ನು ಅರ್ಪಣೆಗೋಸ್ಕರ ಅರ್ಪಿಸುವುದಾದರೆ, ಅದನ್ನು ಅವನು ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು.</verse>
				<verse number="8">ಅವನು ತನ್ನ ಅರ್ಪಣೆಯ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು, ಅದನ್ನು ದೇವದರ್ಶನದ ಗುಡಾರದ ಎದುರಿನಲ್ಲಿ ವಧಿಸಬೇಕು. ಇದಲ್ಲದೆ ಆರೋನನ ಪುತ್ರರು ಬಲಿಪೀಠದ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸಬೇಕು.</verse>
				<verse number="9">ಸಮಾಧಾನದ ಬಲಿಗಾಗಿ ಅದರ ಇಡೀ ಹಿಂಭಾಗವನ್ನೂ, ಅದರ ಕೊಬ್ಬನ್ನೂ, ಅವನು ಬೆನ್ನೆಲುಬಿನಿಂದ ತೆಗೆದು ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ, ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ,</verse>
				<verse number="10">ಎರಡು ಮೂತ್ರ ಜನಕಾಂಗಗಳನ್ನೂ, ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ, ಕಾಳಿಜದ ಉತ್ತಮ ಭಾಗ, ಮೂತ್ರಜನಕಾಂಗಗಳೊಂದಿಗೆ ವಪೆಯ ಮೇಲಿರುವ ಪೊರೆಯನ್ನೂ ತೆಗೆದುಕೊಂಡು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.</verse>
				<verse number="11">ಯಾಜಕನು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುವುದು.</verse>
				<verse number="12">“ ‘ಸಮರ್ಪಣೆಯು ಮೇಕೆಯಾಗಿದ್ದರೆ, ಅದನ್ನು ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು.</verse>
				<verse number="13">ಅವನು ಅದರ ತಲೆಯ ಮೇಲೆ ತನ್ನ ಕೈಯನ್ನಿಟ್ಟು ದೇವದರ್ಶನದ ಗುಡಾರದ ಮುಂದೆ ಅದನ್ನು ವಧಿಸಬೇಕು. ಆಗ ಆರೋನನ ಪುತ್ರರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.</verse>
				<verse number="14">ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ, ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ,</verse>
				<verse number="15">ಎರಡು ಮೂತ್ರ ಜನಕಾಂಗಗಳನ್ನೂ ಪಕ್ಕೆಯ ಬದಿಗಳಲ್ಲಿರುವವುಗಳ ಮೇಲಿರುವ ಕೊಬ್ಬನ್ನೂ ಕಾಳಿಜದ ಉತ್ತಮ ಭಾಗ, ಮೂತ್ರಜನಕಾಂಗಗಳೊಂದಿಗೆ ವಪೆಯ ಮೇಲಿರುವ ಪೊರೆಯನ್ನೂ ತೆಗೆದುಕೊಂಡು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.</verse>
				<verse number="16">ಯಾಜಕನು ಅವುಗಳನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಸುವಾಸನೆಯ ಯಜ್ಞಾರ್ಪಣೆಯ ಆಹಾರವಾಗಿರುವುದು. ಎಲ್ಲಾ ಕೊಬ್ಬು ಯೆಹೋವ ದೇವರದೇ.</verse>
				<verse number="17">“ ‘ನೀವು ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನದೆ ಇರುವುದು ನಿಮ್ಮ ಸಂತತಿಯವರಿಗೆಲ್ಲಾ ನಿಮ್ಮ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವುದು,’ ” ಎಂದು ಹೇಳಿದರು.</verse>
			</chapter>
			<chapter number="4">
				<verse number="1">ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="2">“ಇಸ್ರಾಯೇಲರಿಗೆ ಹೀಗೆ ಹೇಳು: ‘ಯಾರಾದರೂ ಉದ್ದೇಶವಿಲ್ಲದೆ ಪಾಪಮಾಡಿದರೆ ಹಾಗೂ ಯೆಹೋವ ದೇವರ ಆಜ್ಞೆಗಳಲ್ಲಿ ನಿಷೇಧಿಸಿದ ಯಾವುದನ್ನಾದರೂ ಮಾಡಿದರೆ, ಅವರು ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಕೈಗೊಳ್ಳಬೇಕು:</verse>
				<verse number="3">“ ‘ಅಭಿಷಿಕ್ತನಾದ ಯಾಜಕನು ಪಾಪಮಾಡಿ ಜನರ ಮೇಲೆ ಅಪರಾಧವನ್ನು ತಂದರೆ, ತಾನು ಮಾಡಿದ ಪಾಪಕ್ಕಾಗಿ ಕಳಂಕರಹಿತವಾದ ಒಂದು ಎಳೆಯ ಹೋರಿಯನ್ನು ದೋಷಪರಿಹಾರಕ ಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.</verse>
				<verse number="4">ಅವನು ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಎದುರಿಗೆ ತರಬೇಕು. ತನ್ನ ಕೈಯನ್ನು ಆ ಹೋರಿಯ ತಲೆಯ ಮೇಲಿಟ್ಟು, ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು.</verse>
				<verse number="5">ಆಗ ಅಭಿಷಿಕ್ತನಾದ ಯಾಜಕನು ಆ ಹೋರಿಯ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಳಿಗೆ ತರಬೇಕು.</verse>
				<verse number="6">ಯಾಜಕನು ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ, ಯೆಹೋವ ದೇವರ ಮುಂದಿನ ಪವಿತ್ರ ಸ್ಥಳದ ತೆರೆಯ ಮುಂದೆ ರಕ್ತವನ್ನು ಏಳು ಸಾರಿ ಚಿಮುಕಿಸಬೇಕು.</verse>
				<verse number="7">ಯಾಜಕನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಸುವಾಸನೆಯುಳ್ಳ ಧೂಪವನ್ನು ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಮುಂದೆ ಹಚ್ಚಬೇಕು. ಅಲ್ಲದೆ ಆ ಹೋರಿಯ ಎಲ್ಲಾ ರಕವನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.</verse>
				<verse number="8">ಅವನು ಪಾಪ ಪರಿಹಾರದ ಬಲಿಗಾಗಿರುವ ಹೋರಿಯ ಎಲ್ಲಾ ಕೊಬ್ಬನ್ನು ಅದರಿಂದ ತೆಗೆಯಬೇಕು. ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ,</verse>
				<verse number="9">ಎರಡು ಮೂತ್ರಪಿಂಡಗಳನ್ನು ಪಕ್ಕೆಯ ಬದಿಯಲ್ಲಿರುವ ಕೊಬ್ಬನ್ನೂ, ಮೂತ್ರಪಿಂಡದೊಂದಿಗೂ ಕಾಳಿಜದ ಉತ್ತಮ ಭಾಗವನ್ನೂ ಅವನು ತೆಗೆಯಬೇಕು.</verse>
				<verse number="10">ಸಮಾಧಾನದ ಬಲಿಯನ್ನು ಹೋರಿಯಿಂದ ತೆಗೆದಂತೆಯೇ ತೆಗೆಯಬೇಕು. ಯಾಜಕನು ದಹನಬಲಿಯ ಪೀಠದ ಮೇಲೆ ಅವುಗಳನ್ನು ಸುಡಬೇಕು.</verse>
				<verse number="11">ಆ ಹೋರಿಯ ಚರ್ಮವನ್ನು, ಅದರ ಎಲ್ಲಾ ಮಾಂಸವನ್ನು, ಅದರ ತಲೆ, ಅದರ ಕಾಲುಗಳು, ಅದರ ಕರುಳುಗಳು, ಅದರ ಸಗಣಿಯೊಂದಿಗೆ</verse>
				<verse number="12">ಎಂದರೆ ಇಡೀ ಹೋರಿಯನ್ನು ಪಾಳೆಯದ ಹೊರಗೆ ಶುದ್ಧವಾದ ಸ್ಥಳಕ್ಕೆ ಅಂದರೆ ಬೂದಿ ಚೆಲ್ಲುವ ಸ್ಥಳಕ್ಕೆ ತಂದು, ಕಟ್ಟಿಗೆಯ ಮೇಲೆ ಬೆಂಕಿಯಿಂದ ಅದನ್ನು ಸುಡಬೇಕು.</verse>
				<verse number="13">“ ‘ಮಾಡಬಾರದ ಕೆಲಸಗಳನ್ನು ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ಯಾವುದನ್ನಾದರೂ ಇಸ್ರಾಯೇಲರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಮತ್ತು ಅದು ಸಮೂಹಕ್ಕೆ ಕಣ್ಮರೆಯಾಗಿದ್ದರೆ</verse>
				<verse number="14">ಅವರು ಮಾಡಿದ ಪಾಪವು ಗೊತ್ತಾದಾಗ, ಆ ಪಾಪಕ್ಕಾಗಿ ಸಮಾಜವು ಒಂದು ಎಳೆಯ ಹೋರಿಯನ್ನು ದೇವದರ್ಶನದ ಗುಡಾರದ ಮುಂದೆ ಪಾಪ ಪರಿಹಾರದ ಬಲಿಯಾಗಿ ತರಬೇಕು.</verse>
				<verse number="15">ಸಮಾಜದ ಹಿರಿಯರು ಯೆಹೋವ ದೇವರ ಮುಂದೆ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ಆ ಹೋರಿಯನ್ನು ಯೆಹೋವ ದೇವರ ಮುಂದೆ ವಧಿಸಬೇಕು.</verse>
				<verse number="16">ಅಭಿಷಿಕ್ತನಾದ ಯಾಜಕನು ಆ ಹೋರಿಯ ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗೆ ತಂದು,</verse>
				<verse number="17">ಅದರಲ್ಲಿ ಬೆರಳನ್ನು ಅದ್ದಿ ಅದನ್ನು ಯೆಹೋವ ದೇವರ ಮುಂದೆ ಅಂದರೆ ತೆರೆಯ ಮುಂದೆ ಏಳು ಸಾರಿ ಚಿಮುಕಿಸಬೇಕು.</verse>
				<verse number="18">ಇದಲ್ಲದೆ ಅವನು ಸ್ವಲ್ಪ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ಬಲಿಪೀಠದ ಕೊಂಬುಗಳಿಗೆ ಯೆಹೋವ ದೇವರ ಎದುರಿನಲ್ಲಿ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ದೇವದರ್ಶನದ ಗುಡಾರದೊಳಗಿರುವ ದಹನಬಲಿಯ ಪೀಠದ ಅಡಿಯಲ್ಲಿ ಸುರಿಯಬೇಕು.</verse>
				<verse number="19">ಅವನು ಅದರ ಎಲ್ಲಾ ಕೊಬ್ಬನ್ನೂ ತೆಗೆದುಕೊಂಡು ಬಲಿಪೀಠದ ಮೇಲೆ ಸುಡಬೇಕು.</verse>
				<verse number="20">ಪಾಪ ಪರಿಹಾರದ ಬಲಿಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ, ಈ ಹೋರಿಗೂ ಮಾಡಬೇಕು. ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವರಿಗೆ ಕ್ಷಮಾಪಣೆಯಾಗುವುದು.</verse>
				<verse number="21">ಅವನು ಮೊದಲನೆಯ ಹೋರಿಯನ್ನು ಸುಟ್ಟಂತೆಯೇ, ಈ ಹೋರಿಯನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಸುಡಬೇಕು. ಅದು ಸಮಾಜಕ್ಕೆ ಪಾಪ ಪರಿಹಾರದ ಬಲಿಯಾಗಿ ಇರುವುದು.</verse>
				<verse number="22">“ ‘ಒಬ್ಬ ಅಧಿಪತಿಯು ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ,</verse>
				<verse number="23">ಇಲ್ಲವೆ ಅವನು ಮಾಡಿದ ಆ ಪಾಪವು ಅವನಿಗೆ ತಿಳಿದುಬಂದರೆ, ಅವನು ಬಲಿಗಾಗಿ ಹೋತಗಳಲ್ಲಿ ಕಳಂಕರಹಿತವಾದ ಒಂದು ಹೋತವನ್ನು ತಂದು ಸಮರ್ಪಿಸಬೇಕು.</verse>
				<verse number="24">ಅವನು ತನ್ನ ಕೈಯನ್ನು ಆ ಹೋತದ ತಲೆಯ ಮೇಲೆ ಇಟ್ಟು, ಯೆಹೋವ ದೇವರ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು.</verse>
				<verse number="25">ಯಾಜಕನು ಪಾಪ ಪರಿಹಾರದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು, ದಹನಬಲಿಯ ಪೀಠದ ಮೇಲೆ ಅಡಿಯಲ್ಲಿ ಹೊಯ್ಯಬೇಕು.</verse>
				<verse number="26">ಅವರು ಸಮಾಧಾನದ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಯಾಜಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.</verse>
				<verse number="27">“ ‘ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡಬಾರದವುಗಳನ್ನು ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ,</verse>
				<verse number="28">ಇಲ್ಲವೆ ಅವರು ಮಾಡಿದ ಪಾಪವು ಅವರಿಗೆ ತಿಳಿದುಬಂದರೆ, ಅವರು ಪಾಪ ಪರಿಹಾರಕ್ಕಾಗಿ ಕಳಂಕರಹಿತವಾದ ಒಂದು ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.</verse>
				<verse number="29">ಅವರು ತಮ್ಮ ಕೈಯನ್ನು ಪಾಪದ ಬಲಿಯ ಮೇಲಿಟ್ಟು, ಆ ಪಾಪ ಪರಿಹಾರದ ಬಲಿಯನ್ನು ದಹನಬಲಿಯ ಸ್ಥಳದಲ್ಲಿ ವಧಿಸಬೇಕು.</verse>
				<verse number="30">ಆಗ ಯಾಜಕನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು, ದಹನಬಲಿಯ ಪೀಠದ ಕೊಂಬುಗಳಿಗೆ ಹಚ್ಚಿ, ಉಳಿದ ಎಲ್ಲಾ ರಕ್ತವನ್ನು ಆ ಬಲಿಪೀಠದ ಅಡಿಯಲ್ಲಿ ಸುರಿಯಬೇಕು.</verse>
				<verse number="31">ಅವನು ಸಮಾಧಾನ ಬಲಿಯ ಕೊಬ್ಬನ್ನು ತೆಗೆದಂತೆ, ಅದರ ಎಲ್ಲಾ ಕೊಬ್ಬನ್ನು ತೆಗೆಯಬೇಕು. ಯಾಜಕನು ಅದನ್ನು ಬಲಿಪೀಠದ ಮೇಲೆ ಯೆಹೋವ ದೇವರಿಗೆ ಸುವಾಸನೆಯಾಗಿ ಸುಡಬೇಕು. ಇದಲ್ಲದೆ ಯಾಜಕನು ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.</verse>
				<verse number="32">“ ‘ಯಾರಾದರೂ ಪಾಪ ಪರಿಹಾರದ ಬಲಿಗಾಗಿ ಒಂದು ಕುರಿಮರಿಯನ್ನು ತರುವುದಾದರೆ, ಕಳಂಕರಹಿತವಾದ ಒಂದು ಹೆಣ್ಣನ್ನು ತರಬೇಕು.</verse>
				<verse number="33">ಅವರು ಪಾಪ ಪರಿಹಾರದ ಬಲಿಯ ತಲೆಯ ಮೇಲೆ ತಮ್ಮ ಕೈಯನ್ನು ಇಟ್ಟು, ದೋಷಪರಿಹಾರ ಬಲಿಯಾಗಿ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು.</verse>
				<verse number="34">ಯಾಜಕನು ಪಾಪ ಪರಿಹಾರದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು, ದಹನಬಲಿಯ ಪೀಠದ ಕೊಂಬುಗಳಿಗೆ ಹಚ್ಚಬೇಕು. ಉಳಿದ ಎಲ್ಲಾ ರಕ್ತವನ್ನು ಬಲಿಪೀಠದ ಅಡಿಯಲ್ಲಿ ಹೊಯ್ಯಬೇಕು.</verse>
				<verse number="35">ಇದಲ್ಲದೆ ಸಮಾಧಾನ ಬಲಿಗಳ ಕುರಿಮರಿಯ ಕೊಬ್ಬಿನಂತೆಯೇ, ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು. ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಯೆಹೋವ ದೇವರಿಗೆ ಮಾಡಿದಂತೆಯೇ, ಬಲಿಪೀಠದ ಮೇಲೆ ಅವುಗಳನ್ನು ಸುಡಬೇಕು. ಯಾಜಕನು ಅವನು ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.</verse>
			</chapter>
			<chapter number="5">
				<verse number="1">“ ‘ಯಾವನಾದರೂ ಆಣೆ ಇಡುವುದನ್ನು ಕೇಳಿ, ಸಾಕ್ಷಿಯಾಗಿದ್ದು, ಪಾಪಮಾಡಿದರೆ, ಅವನು ಅದನ್ನು ಕಂಡೂ ಇಲ್ಲವೆ ತಿಳಿದೂ ಅವನು ಅದನ್ನು ಹೇಳದಿದ್ದರೆ, ಅವನು ತನ್ನ ಅಪರಾಧವನ್ನು ಹೊತ್ತುಕೊಳ್ಳಬೇಕು.</verse>
				<verse number="2">“ ‘ಇಲ್ಲವೆ, ಯಾವನಿಗಾದರೂ ಅಶುದ್ಧವಾದ ಕಾಡುಮೃಗ, ಪಶು ಇವುಗಳ ಹೆಣವಾಗಲಿ, ಅಶುದ್ಧವಾದ ಹರಿದಾಡುವ ಕ್ರಿಮಿಗಳ ಹೆಣಗಳಾಗಲಿ ಅಥವಾ ಬೇರೆ ಯಾವ ಅಶುದ್ಧವಸ್ತುವಾಗಲಿ ತಗಲಿದರೆ ಅವನಿಗೆ ತಿಳಿಯದೆ ಇದ್ದರೂ ಅವನು ಅಶುದ್ಧವಾಗಿದ್ದು ಅಪರಾಧಿಯಾಗಿರುವನು.</verse>
				<verse number="3">ಇಲ್ಲವೆ, ಅವನು ಮನುಷ್ಯನ ಅಶುದ್ಧತ್ವವನ್ನು ತಗಲಿದರೆ, ಮನುಷ್ಯನನ್ನು ಅಶುದ್ಧಪಡಿಸುವ ಯಾವುದೇ ಅಶುದ್ಧತ್ವವಾಗಿದ್ದರೂ ಅದು ಅವನಿಗೆ ತಿಳಿಯದೆ ಇದ್ದು, ತರುವಾಯ ಅದು ಅವನಿಗೆ ತಿಳಿದಾಗ, ಅವನು ಅಪರಾಧಿಯಾಗಿರುವನು.</verse>
				<verse number="4">ಒಬ್ಬನು ಆಣೆಯಿಟ್ಟು ಕೆಟ್ಟದ್ದನ್ನಾಗಲಿ, ಒಳ್ಳೆಯದನ್ನಾಗಲಿ ಮಾಡುವುದನ್ನು ತನ್ನ ತುಟಿಗಳಿಂದ ಉಚ್ಛರಿಸಿದರೆ, ಒಬ್ಬ ಮನುಷ್ಯನು ಪ್ರಮಾಣದೊಡನೆ ಉಚ್ಚರಿಸಿದ್ದು ಯಾವುದೇ ಆಗಿರಲಿ, ಅದು ಅವನಿಗೆ ತಿಳಿಯದೆ ಇದ್ದು, ತರುವಾಯ ಅದು ಅವನಿಗೆ ತಿಳಿದಾಗ, ಇವುಗಳೊಂದರಲ್ಲಿ ಅವನು ಅಪರಾಧಿಯಾಗಿರುವನು.</verse>
				<verse number="5">ಅವನು ಇವುಗಳೊಂದರಲ್ಲಿ ಅಪರಾಧಿಯಾಗಿದ್ದು, ತಾನು ಅದರಲ್ಲಿ ಪಾಪಮಾಡಿದ್ದೇನೆಂದು ಅರಿಕೆ ಮಾಡುವುದಾದರೆ,</verse>
				<verse number="6">ಅವನು ತಾನು ಮಾಡಿದ ಪಾಪಕ್ಕಾಗಿ ಯೆಹೋವ ದೇವರಿಗೆ ಅಪರಾಧ ಬಲಿಯನ್ನು ಪಾಪ ಪರಿಹಾರದ ಬಲಿಗಾಗಿ ಮಂದೆಯಿಂದ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ತರಬೇಕು. ಯಾಜಕನು ಅವನ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು.</verse>
				<verse number="7">“ ‘ಯಾರಾದರೂ ಒಂದು ಕುರಿಮರಿಯನ್ನು ತರುವುದಕ್ಕೆ ಅಶಕ್ತರಾಗಿದ್ದರೆ, ತಾವು ಮಾಡಿದ ಅಪರಾಧಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ, ಇಲ್ಲವೆ ಎರಡು ಪಾರಿವಾಳದ ಮರಿಗಳನ್ನಾಗಲಿ ಯೆಹೋವ ದೇವರಿಗೆ ತರಬೇಕು. ಒಂದನ್ನು ಪಾಪ ಪರಿಹಾರದ ಬಲಿಗಾಗಿ, ಮತ್ತೊಂದನ್ನು ದಹನಬಲಿಗಾಗಿ ತರಬೇಕು.</verse>
				<verse number="8">ಅವನು ಅವುಗಳನ್ನು ಯಾಜಕರ ಬಳಿಗೆ ತಂದಾಗ ಅವನು ಪಾಪ ಪರಿಹಾರದ ಬಲಿಗೆ ತಂದಿರುವುದನ್ನು ಮೊದಲು ಸಮರ್ಪಿಸಿ, ಅದರ ತಲೆಯನ್ನು ಕುತ್ತಿಗೆಯಿಂದ ಮುರಿಯಬೇಕು. ಆದರೆ ಅದನ್ನು ವಿಭಾಗಿಸಬಾರದು.</verse>
				<verse number="9">ಇದಲ್ಲದೆ, ಅವನು ಪಾಪ ಪರಿಹಾರದ ಬಲಿಯ ರಕ್ತವನ್ನು ಬಲಿಪೀಠದ ಬದಿಯಲ್ಲಿ ಚಿಮುಕಿಸಬೇಕು. ಉಳಿದ ರಕ್ತವನ್ನು ಬಲಿಪೀಠದ ಬದಿಯಲ್ಲಿ ಹಿಂಡಬೇಕು. ಅದು ದೋಷಪರಿಹಾರ ಬಲಿಯಾಗಿರುವುದು.</verse>
				<verse number="10">ಅವನು ಕ್ರಮದ ಪ್ರಕಾರ, ಎರಡನೆಯದನ್ನು ದಹನಬಲಿಯಾಗಿ ಸಮರ್ಪಿಸಬೇಕು. ಯಾಜಕನು ಅವನು ಮಾಡಿದ ಪಾಪಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನಿಗೆ ಕ್ಷಮೆ ದೊರಕುವುದು.</verse>
				<verse number="11">“ ‘ಆದರೆ ಅವರು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತರುವುದಕ್ಕೆ ಅಶಕ್ತರಾಗಿದ್ದರೆ, ಪಾಪಮಾಡಿದವರು ತಮ್ಮ ಬಲಿಗಾಗಿ, ಮೂರು ಸೇರು ಗೋಧಿ ಹಿಟ್ಟನ್ನು ಪಾಪ ಪರಿಹಾರದ ಬಲಿಯಾಗಿ ತರಬೇಕು. ಅವರು ಅದರ ಮೇಲೆ ಎಣ್ಣೆಯನ್ನು ಇಲ್ಲವೆ ಸಾಂಬ್ರಾಣಿಯನ್ನು ಹಾಕಬಾರದು. ಏಕೆಂದರೆ ಅದು ದೋಷಪರಿಹಾರ ಬಲಿಯಾಗಿದೆ.</verse>
				<verse number="12">ತರುವಾಯ ಅವರು ಅದನ್ನು ಯಾಜಕನ ಬಳಿಗೆ ತರಬೇಕು. ಯಾಜಕನು ಜ್ಞಾಪಕಾರ್ಥವಾಗಿ ಅದರಿಂದ ತನ್ನ ಹಿಡಿಯಷ್ಟು ತೆಗೆದುಕೊಂಡು, ಬಲಿಪೀಠದ ಮೇಲೆ ಬೆಂಕಿಯ ಅರ್ಪಣೆಗಳಿಗನುಸಾರವಾಗಿ ಯೆಹೋವ ದೇವರಿಗಾಗಿ ಸುಡಬೇಕು. ಅದು ಪಾಪ ಪರಿಹಾರದ ಬಲಿಯಾಗಿರುವುದು.</verse>
				<verse number="13">ಇವುಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲಾಗುವುದು. ಉಳಿದದ್ದು ಯಾಜಕನಿಗಾಗಿ ಧಾನ್ಯ ಸಮರ್ಪಣೆಯಾಗಿರುವುದು.’ ”</verse>
				<verse number="14">ಯೆಹೋವ ದೇವರು ಮೋಶೆಗೆ,</verse>
				<verse number="15">“ಯಾರಾದರೂ ಅತಿಕ್ರಮಿಸಿದ್ದರೆ ಮತ್ತು ಯೆಹೋವ ದೇವರ ಪರಿಶುದ್ಧ ಸಂಗತಿಗಳನ್ನು ಅರಿಯದೆ ಪಾಪಮಾಡಿದ್ದರೆ, ಅವರು ತಮ್ಮ ಅತಿಕ್ರಮಕ್ಕಾಗಿ ತಮ್ಮ ಹಿಂಡುಗಳಿಂದ ಕಳಂಕರಹಿತವಾದ ಟಗರನ್ನು ಸಮರ್ಪಿಸಬೇಕು. ಪವಿತ್ರ ಸ್ಥಳಕ್ಕೆ ನೇಮಕವಾದ ಎರಡು ಬೆಳ್ಳಿನಾಣ್ಯ ಅಥವಾ ಹೆಚ್ಚು ಬೆಲೆಬಾಳುವ ಟಗರನ್ನು ಹಿಂಡಿನಿಂದ ತಂದು ಪ್ರಾಯಶ್ಚಿತ್ತ ಬಲಿಗಾಗಿ ಯೆಹೋವ ದೇವರಿಗೆ ಅರ್ಪಿಸಬೇಕು.</verse>
				<verse number="16">ಪರಿಶುದ್ಧವಾದದ್ದಲ್ಲದೆ, ತಾನು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವರ ವಸ್ತುಗಳನ್ನು ಅದಕ್ಕೆ ಐದನೆಯ ಪಾಲನ್ನು ಕೂಡಿಸಿ, ಅದನ್ನು ಯಾಜಕನಿಗೆ ಕೊಡಬೇಕು. ಅವನು ಪ್ರಾಯಶ್ಚಿತ್ತಕ್ಕಾಗಿ ತಂದ ಟಗರಿನಿಂದ ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು,” ಎಂದನು.</verse>
				<verse number="17">“ಯಾರಾದರೂ ಯೆಹೋವ ದೇವರು ನಿಷೇಧಿಸಿದ ಆಜ್ಞೆಗಳಲ್ಲಿ ಯಾವುದನ್ನಾದರೂ ಮಾಡಿ, ಪಾಪಮಾಡಿದರೆ, ಅದು ಅವರಿಗೆ ತಿಳಿಯದಿದ್ದರೂ ಅವರು ಅಪರಾಧಿಯಾಗಿರುವರು ಮತ್ತು ಅವರು ತಮ್ಮ ಅಪರಾಧವನ್ನು ಹೊತ್ತುಕೊಳ್ಳುವರು.</verse>
				<verse number="18">ಅಲ್ಲದೆ ಅವನು ಹಿಂಡಿನೊಳಗಿಂದ ಕಳಂಕರಹಿತವಾದ ಒಂದು ಟಗರನ್ನು ನಿನ್ನ ಅಂದಾಜಿಗನುಸಾರ ಪ್ರಾಯಶ್ಚಿತ್ತ ಬಲಿಗಾಗಿ, ಯಾಜಕನ ಬಳಿಗೆ ತರಬೇಕು. ಯಾಜಕನು, ಅಜ್ಞಾನದಿಂದ ಅವನು ಉದ್ದೇಶವಿಲ್ಲದೆ ಮಾಡಿದ ತಪ್ಪಿಗಾಗಿ, ಪ್ರಾಯಶ್ಚಿತ್ತವನ್ನು ಮಾಡಬೇಕು. ಅವನಿಗೆ ಕ್ಷಮೆ ದೊರಕುವುದು.</verse>
				<verse number="19">ಅವನು ನಿಶ್ಚಯವಾಗಿ ಯೆಹೋವ ದೇವರ ವಿರುದ್ಧವಾಗಿ ಅಪರಾಧ ಮಾಡಿದ್ದಾನೆ, ಅದಕ್ಕಾಗಿ ಇದು ಪ್ರಾಯಶ್ಚಿತ್ತ ಬಲಿಯಾಗಿದೆ,” ಎಂದರು.</verse>
			</chapter>
			<chapter number="6">
				<verse number="1">ಯೆಹೋವ ದೇವರು ಮೋಶೆಯೊಡನೆ ಮಾತನಾಡಿ,</verse>
				<verse number="2">“ಯಾರಾದರೂ ಪಾಪಮಾಡಿದರೆ ಮತ್ತು ನೆರೆಯವರಿಗೆ ಮೋಸ ಮಾಡುವ ಮೂಲಕ ಯೆಹೋವ ದೇವರಿಗೆ ವಿಶ್ವಾಸದ್ರೋಹಿ ಆಗಿದ್ದರೆ ಅಥವಾ ಅವರ ಆರೈಕೆಯಲ್ಲಿ ಏನಾದರೂ ಉಳಿಸಿಕೊಂಡಿದ್ದರೆ ಅಥವಾ ಯಾವುದನ್ನಾದರೂ ಕದ್ದುಕೊಂಡಿದ್ದರೆ ಅಥವಾ ಅವರು ತಮ್ಮ ನೆರೆಹೊರೆಯವರಿಗೆ ಮೋಸ ಮಾಡಿದ್ದರೆ,</verse>
				<verse number="3">ಇಲ್ಲವೆ ಕಳೆದುಹೋಗಿದ ವಸ್ತು ಸಿಕ್ಕಿ, ಅದರ ವಿಷಯದಲ್ಲಿ ಸುಳ್ಳಾಡಿದ್ದರೆ ಮತ್ತು ಸುಳ್ಳಾಗಿ ಪ್ರಮಾಣ ಮಾಡಿದ್ದರೆ, ಇವೆಲ್ಲವುಗಳಲ್ಲಿ ಯಾವುದನ್ನಾದರೂ ಒಬ್ಬನು ಮಾಡಿದ್ದರೆ, ಅವನು ಪಾಪಮಾಡುವವನಾಗಿದ್ದಾನೆ.</verse>
				<verse number="4">ಅವನು ಪಾಪಮಾಡಿ, ಅಪರಾಧಿಯಾಗಿರುವುದರಿಂದ ಬಲಾತ್ಕಾರವಾಗಿ ಪಡೆದುಕೊಂಡದ್ದನ್ನೂ ಇಲ್ಲವೆ ಅವನು ಮೋಸದಿಂದ ಪಡೆದ ವಸ್ತುವನ್ನೂ ಇಲ್ಲವೆ ಅವನ ವಶಕ್ಕೆ ಸಿಕ್ಕಿದ ವಸ್ತುವನ್ನೂ ಹಿಂದಕ್ಕೆ ತಂದುಕೊಡಬೇಕು.</verse>
				<verse number="5">ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ, ಪಡೆದವುಗಳೆಲ್ಲವುಗಳನ್ನೂ ಕೂಡಿಸಿ, ಹಿಂದಕ್ಕೆ ಕೊಡಬೇಕು. ಪ್ರಾಯಶ್ಚಿತ್ತದ ಬಲಿ ಅರ್ಪಿಸುವ ದಿನದಲ್ಲಿ, ಅದರ ಯಜಮಾನನು ಯಾವನಾಗಿರುವನೋ, ಅವನಿಗೆ ಕೊಡಬೇಕು.</verse>
				<verse number="6">ಅವನು ತನ್ನ ಪ್ರಾಯಶ್ಚಿತ್ತಕ್ಕಾಗಿ ಕಳಂಕರಹಿತವಾದ ಒಂದು ಟಗರನ್ನು ಹಿಂಡಿನಿಂದ ತಂದು ಅದನ್ನು ಯೆಹೋವ ದೇವರಿಗೆಂದು ಯಾಜಕನ ಬಳಿಗೆ ತರಬೇಕು.</verse>
				<verse number="7">ಯಾಜಕನು ಅವನಿಗಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಬೇಕು. ಅತಿಕ್ರಮದಲ್ಲಿ ಅವನು ಏನನ್ನಾದರೂ ಮಾಡಿದ್ದರೆ, ಆ ವಿಷಯದಲ್ಲಿ ಅವನಿಗೆ ಕ್ಷಮಾಪಣೆಯಾಗುವುದು,” ಎಂದರು.</verse>
				<verse number="8">ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,</verse>
				<verse number="9">“ಆರೋನನಿಗೂ ಅವನ ಪುತ್ರರಿಗೂ ಆಜ್ಞಾಪಿಸಿ ಹೀಗೆ ಹೇಳು, ‘ಇದು ದಹನಬಲಿಯ ನಿಯಮವಾಗಿದೆ. ದಹನಬಲಿ ಇಡೀ ರಾತ್ರಿ, ಅಂದರೆ ಬೆಳಗಿನವರೆಗೆ ಬಲಿಪೀಠದ ಅಗ್ನಿಕುಂಡದ ಮೇಲೆ ಇರಬೇಕು. ಬಲಿಪೀಠದ ಬೆಂಕಿಯು ಅದರೊಳಗೆ ಸುಡುತ್ತಾ ಇರುವುದು.</verse>
				<verse number="10">ಯಾಜಕನು ತನ್ನ ನಾರುಮಡಿಯ ಉಡುಪನ್ನೂ ತನ್ನ ಶರೀರದ ಮೇಲೆ ನಾರುಮಡಿಯ ಒಳಉಡುಪುಗಳನ್ನೂ ಧರಿಸಿಕೊಂಡು, ಬಲಿಪೀಠದ ಮೇಲೆ ದಹನಬಲಿಯೊಂದಿಗೆ ಸುಟ್ಟ ಬೂದಿಯನ್ನು ತೆಗೆದುಕೊಂಡು, ಅದನ್ನು ಬಲಿಪೀಠದ ಬಳಿಯಲ್ಲಿ ಹಾಕಬೇಕು.</verse>
				<verse number="11">ಆಮೇಲೆ ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ, ಬೇರೆ ಉಡುಪುಗಳನ್ನು ಧರಿಸಿಕೊಂಡು, ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.</verse>
				<verse number="12">ಬಲಿಪೀಠದ ಮೇಲೆ ಬೆಂಕಿಯು ಅದರೊಳಗೆ ಸುಡುತ್ತಲೇ ಇರಬೇಕು. ಅದು ಆರಿಹೋಗಿರಬಾರದು. ಪ್ರತಿ ಮುಂಜಾನೆ ಯಾಜಕನು ಅದರ ಮೇಲೆ ಕಟ್ಟಿಗೆಯನ್ನು ಹಾಕಬೇಕು. ದಹನಬಲಿಯನ್ನು ಅದರ ಮೇಲೆ ಕ್ರಮವಾಗಿ ಇಡಬೇಕು. ಇದಲ್ಲದೆ ಅವನು ಅದರ ಮೇಲೆ ಸಮಾಧಾನ ಬಲಿ ಅರ್ಪಣೆಗಳ ಕೊಬ್ಬನ್ನು ಸುಡಬೇಕು.</verse>
				<verse number="13">ಬಲಿಪೀಠದ ಮೇಲೆ ಬೆಂಕಿಯು ಯಾವಾಗಲೂ ಉರಿಯುತ್ತಿರಬೇಕು, ಅದು ಎಂದಿಗೂ ಆರಬಾರದು.</verse>
				<verse number="14">“ ‘ಧಾನ್ಯ ಸಮರ್ಪಣೆಯ ನಿಯಮವು ಇದೇ. ಆರೋನನ ಪುತ್ರರು ಬಲಿಪೀಠದ ಮುಂದೆ ಯೆಹೋವ ದೇವರ ಸನ್ನಿಧಿಯಲ್ಲಿ ಅದನ್ನು ಸಮರ್ಪಿಸಬೇಕು.</verse>
				<verse number="15">ಯಾಜಕನು ಧಾನ್ಯ ಸಮರ್ಪಣೆಯ ಹಿಟ್ಟಿನಲ್ಲಿ ಒಂದು ಹಿಡಿ ಹಿಟ್ಟನ್ನೂ, ಧಾನ್ಯ ಸಮರ್ಪಣೆಯ ಮೇಲಿರುವ ಅದರ ಎಣ್ಣೆಯನ್ನೂ, ಅದರ ಎಲ್ಲಾ ಸಾಂಬ್ರಾಣಿಯನ್ನೂ ತೆಗೆದುಕೊಂಡು ಜ್ಞಾಪಕಾರ್ಥವಾಗಿ ಯೆಹೋವ ದೇವರಿಗೆ ಬಲಿಪೀಠದ ಮೇಲೆ ಸುವಾಸನೆಗಾಗಿ ಅದನ್ನು ಸುಡಬೇಕು.</verse>
				<verse number="16">ಅದರಲ್ಲಿ ಉಳಿದದ್ದನ್ನು ಆರೋನನೂ, ಅವನ ಪುತ್ರರೂ ತಿನ್ನಬೇಕು. ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು. ಅದನ್ನು ಅವರು ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.</verse>
				<verse number="17">ಅದನ್ನು ಹುಳಿಯೊಂದಿಗೆ ಬೇಯಿಸಬಾರದು. ಅವರು ನನಗೆ ಬೆಂಕಿಯಿಂದ ಮಾಡಿದ ನನ್ನ ಸಮರ್ಪಣೆಗಳಲ್ಲಿ ಅವರ ಪಾಲನ್ನು ಅವರಿಗೆ ನಾನು ಕೊಟ್ಟಿದ್ದೇನೆ. ಅದು ದೋಷಪರಿಹಾರದ ಬಲಿಯ ಹಾಗೆಯೂ ಮಹಾಪರಿಶುದ್ಧವಾದದ್ದು.</verse>
				<verse number="18">ಆರೋನನ ಮಕ್ಕಳಲ್ಲಿ ಎಲ್ಲಾ ಗಂಡುಮಕ್ಕಳೂ ಅದನ್ನು ತಿನ್ನಬಹುದು. ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳ ವಿಷಯದಲ್ಲಿ ನಿಮ್ಮ ಸಂತತಿಗಳಿಗೆ ಇದು ಒಂದು ಶಾಶ್ವತ ಕಟ್ಟಳೆಯಾಗಿರುವುದು. ಅವುಗಳನ್ನು ಮುಟ್ಟುವ ಪ್ರತಿಯೊಬ್ಬನೂ ಪರಿಶುದ್ಧನಾಗಿರಬೇಕು,’ ” ಎಂದರು.</verse>
				<verse number="19">ಯೆಹೋವ ದೇವರು ಮೋಶೆಯೊಡನೆ ಮಾತನಾಡಿ,</verse>
				<verse number="20">“ಆರೋನನೂ, ಅವನ ಪುತ್ರರೂ ಅಭಿಷಿಕ್ತರಾದ ದಿನದಲ್ಲಿ, ಅವರು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಬಲಿಯು ಇದೇ. ಮೂರು ಸೇರು ಗೋಧಿ ಹಿಟ್ಟಿನಲ್ಲಿ ನಿರಂತರವಾಗಿರುವ ಧಾನ್ಯ ಸಮರ್ಪಣೆಗಾಗಿ ಮುಂಜಾನೆ ಅದರಲ್ಲಿ ಅರ್ಧಭಾಗವನ್ನು ಮತ್ತು ರಾತ್ರಿ ಅದರಲ್ಲಿ ಅರ್ಧಭಾಗವನ್ನು ಸಮರ್ಪಿಸಬೇಕು.</verse>
				<verse number="21">ಅದನ್ನು ಒಂದು ಬೋಗುಣಿಯಲ್ಲಿ ಎಣ್ಣೆಯೊಂದಿಗೆ ಮಾಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನೆದೇ ಇರಬೇಕು. ಬೇಯಿಸಿದ ಧಾನ್ಯ ಸಮರ್ಪಣೆಯ ತುಂಡುಗಳನ್ನು ನೀನು ಯೆಹೋವ ದೇವರಿಗೆ ಸುವಾಸನೆಯಾಗಿ ಸಮರ್ಪಿಸಬೇಕು.</verse>
				<verse number="22">ಅವನ ಪುತ್ರರಲ್ಲಿ ಅವನಿಗೆ ಬದಲಾಗಿ ಅಭಿಷಿಕ್ತನಾದ ಯಾಜಕನು ಅದನ್ನು ಸಮರ್ಪಿಸಬೇಕು. ಇದು ಯೆಹೋವ ದೇವರಿಗಾಗಿ ನಿರಂತರವಾದ ಒಂದು ಕಟ್ಟಳೆಯಾಗಿದೆ. ಅದು ಸಂಪೂರ್ಣವಾಗಿ ಸುಟ್ಟಿರಬೇಕು.</verse>
				<verse number="23">ಏಕೆಂದರೆ ಯಾಜಕನಿಗಾಗಿರುವ ಪ್ರತಿಯೊಂದು ಧಾನ್ಯ ಸಮರ್ಪಣೆಯೂ ಸಂಪೂರ್ಣವಾಗಿ ಸುಟ್ಟಿರಬೇಕು. ಅದನ್ನು ತಿನ್ನಬಾರದು,” ಎಂದರು.</verse>
				<verse number="24">ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,</verse>
				<verse number="25">“ಆರೋನನಿಗೂ, ಅವನ ಪುತ್ರರಿಗೂ ಹೇಳು: ‘ಪಾಪ ಪರಿಹಾರದ ಬಲಿಯ ನಿಯಮವು ಇದೇ. ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಪಾಪ ಪರಿಹಾರದ ಬಲಿಯೂ ಯೆಹೋವ ದೇವರ ಸನ್ನಿಧಿಯಲ್ಲಿ ವಧಿಸಬೇಕು. ಅದು ಮಹಾಪರಿಶುದ್ಧವಾದದ್ದು.</verse>
				<verse number="26">ಪಾಪ ಪರಿಹಾರದ ಬಲಿಯನ್ನು ಮಾಡುವ ಯಾಜಕನು ಅದನ್ನು ತಿನ್ನಬೇಕು. ಅದನ್ನು ಸಭೆಯ ದೇವದರ್ಶನದ ಗುಡಾರದ ಅಂಗಳದ ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು.</verse>
				<verse number="27">ಅದರ ಮಾಂಸವನ್ನು ಮುಟ್ಟಿದ್ದೆಲ್ಲವೂ ಪರಿಶುದ್ಧವಾಗಿರುವುದು. ಅದರ ರಕ್ತದಲ್ಲಿ ಸ್ವಲ್ಪವಾದರೂ ಉಡುಪಿನ ಮೇಲೆ ಬಿದ್ದರೆ, ಅದನ್ನು ಚಿಮುಕಿಸಿದ ಪರಿಶುದ್ಧ ಸ್ಥಳದಲ್ಲಿಯೇ ತೊಳೆಯಬೇಕು.</verse>
				<verse number="28">ಆದರೆ ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು. ಅದನ್ನು ಒಂದು ಕಂಚಿನ ಪಾತ್ರೆಯಲ್ಲಿ ಬೇಯಿಸಿದ್ದಾದರೆ, ಅದನ್ನು ಬೆಳಗಿ, ನೀರಿನಿಂದ ತೊಳೆಯಬೇಕು.</verse>
				<verse number="29">ಯಾಜಕರ ಕುಟುಂಬದಲ್ಲಿ ಇರುವ ಗಂಡಸರೆಲ್ಲಾ ಅದನ್ನು ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು.</verse>
				<verse number="30">ಯಾವ ಪಾಪ ಪರಿಹಾರದ ಬಲಿಯ ರಕ್ತವನ್ನು ದೇವದರ್ಶನದ ಗುಡಾರದೊಳಗೆ ಸಮಾಧಾನಕ್ಕಾಗಿ ತರಲಾಗಿದೆಯೋ, ಆ ಬಲಿಯನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬಾರದು, ಅದನ್ನು ಬೆಂಕಿಯಿಂದ ಸುಡಬೇಕು.</verse>
			</chapter>
			<chapter number="7">
				<verse number="1">“ ‘ಇವು ಪ್ರಾಯಶ್ಚಿತ್ತ ಬಲಿಯ ನಿಯಮಗಳು: ಇದು ಮಹಾಪರಿಶುದ್ಧವಾದದ್ದು.</verse>
				<verse number="2">ದಹನಬಲಿಯನ್ನು ವಧಿಸಿದ ಸ್ಥಳದಲ್ಲಿಯೇ ಪ್ರಾಯಶ್ಚಿತ್ತದ ಬಲಿಯನ್ನು ವಧಿಸಬೇಕು. ಅದರ ರಕ್ತವನ್ನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಬೇಕು.</verse>
				<verse number="3">ಅದರ ಎಲ್ಲಾ ಕೊಬ್ಬನ್ನೂ, ಅಂದರೆ ಬಾಲದ ಕೊಬ್ಬನ್ನೂ ಕರುಳಿನ ಸುತ್ತಲಿರುವ ಕೊಬ್ಬನ್ನು,</verse>
				<verse number="4">ಬದಿಯಲ್ಲಿರುವ ಎರಡು ಮೂತ್ರ ಜನಕಾಂಗಗಳನ್ನೂ, ಅವುಗಳ ಮೇಲಿರುವ ಕೊಬ್ಬನ್ನೂ, ಪಕ್ಕೆಯ ಬದಿಯಲ್ಲಿಯ ಪೊರೆಯನ್ನೂ ಮೂತ್ರಜನಕಾಂಗಗಳೊಂದಿಗೆ ತೆಗೆದುಕೊಂಡು ಅರ್ಪಿಸಬೇಕು.</verse>
				<verse number="5">ಆಗ ಯಾಜಕನು ಅವುಗಳನ್ನು ಬೆಂಕಿಯಿಂದ ಯೆಹೋವ ದೇವರಿಗೆ ಸಮರ್ಪಿಸುವ ಬಲಿಪೀಠದ ಮೇಲೆ ಸುಡಬೇಕು. ಇದು ಪ್ರಾಯಶ್ಚಿತ್ತದ ಬಲಿಯಾಗಿದೆ.</verse>
				<verse number="6">ಯಾಜಕರಲ್ಲಿ ಪ್ರತಿಯೊಬ್ಬ ಪುರುಷನು ಅದನ್ನು ತಿನ್ನಬೇಕು. ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಅದು ಮಹಾಪರಿಶುದ್ಧವಾದದ್ದು.</verse>
				<verse number="7">“ ‘ಪಾಪ ಪರಿಹಾರದ ಬಲಿಯ ಹಾಗೆಯೇ ಪ್ರಾಯಶ್ಚಿತ್ತದ ಬಲಿಯೂ ಆಗಿದೆ. ಅವುಗಳಿಗೆ ಇರುವುದು ಒಂದೇ ನಿಯಮ, ಅವುಗಳಿಂದ ಪ್ರಾಯಶ್ಚಿತ್ತ ಮಾಡುವ ಯಾಜಕನೇ ಅವುಗಳನ್ನು ತೆಗೆದುಕೊಳ್ಳಬೇಕು.</verse>
				<verse number="8">ದಹನಬಲಿಯನ್ನು ಸಮರ್ಪಿಸುವ ಯಾಜಕನು ತಾನು ಸಮರ್ಪಿಸಿದ ದಹನಬಲಿಯ ತೊಗಲನ್ನು ತಾನೇ ತೆಗೆದುಕೊಳ್ಳಬೇಕು.</verse>
				<verse number="9">ಒಲೆಯಲ್ಲಿ ಬೇಯಿಸಿದ ಬಾಂಡ್ಲಿಯಲ್ಲಿಯೂ ಬೋಗುಣಿಯಲ್ಲಿಯೂ ತಯಾರಿಸಿದ ಎಲ್ಲಾ ಧಾನ್ಯ ಸಮರ್ಪಣೆಯು ಸಮರ್ಪಿಸಿದ ಯಾಜಕನದಾಗಿರಬೇಕು.</verse>
				<verse number="10">ಎಣ್ಣೆಯಿಂದ ಮಿಶ್ರಿತವಾದ ಮತ್ತು ಒಣಗಿದ್ದ ಪ್ರತಿಯೊಂದು ಧಾನ್ಯ ಸಮರ್ಪಣೆಯನ್ನೂ ಆರೋನನ ಪುತ್ರರು ಸರಿ ಸಮಾನವಾಗಿ ತೆಗೆದುಕೊಳ್ಳಬೇಕು.</verse>
				<verse number="11">“ ‘ಅವನು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಸಮಾಧಾನದ ಬಲಿಗಳ ನಿಯಮವು ಇದೇ.</verse>
				<verse number="12">“ ‘ಅವನು ಉಪಕಾರ ಸ್ತುತಿಗಾಗಿ ಅರ್ಪಿಸುವುದಾದರೆ, ಕೃತಜ್ಞತಾಸ್ತುತಿ ಬಲಿಯನ್ನು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಗಳೊಂದಿಗೆ, ಎಣ್ಣೆ ಹೊಯ್ದ ಹುಳಿಯಿಲ್ಲದ ದೋಸೆಗಳೊಂದಿಗೆ ಮತ್ತು ನಯವಾದ ಹಿಟ್ಟಿನ ಎಣ್ಣೆ ಬೆರೆಸಿದ ಹುರಿದ ರೊಟ್ಟಿಗಳೊಂದಿಗೆ ಸಮರ್ಪಿಸಬೇಕು.</verse>
				<verse number="13">ರೊಟ್ಟಿಗಳಲ್ಲದೆ, ಅವನು ಸಮಾಧಾನದ ಬಲಿಗಳನ್ನು ಉಪಕಾರಸ್ತುತಿ ಯಜ್ಞದೊಂದಿಗೆ ತನ್ನ ಬಲಿಗಾಗಿ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು.</verse>
				<verse number="14">ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಕಾಣಿಕೆಯನ್ನಾಗಿ ಯೆಹೋವ ದೇವರಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದ್ದಾಗಬೇಕು.</verse>
				<verse number="15">ಉಪಕಾರ ಸ್ತುತಿಗಾಗಿ ಅವನು ಸಮಾಧಾನ ಬಲಿಯ ಮಾಂಸವನ್ನು ಅರ್ಪಿಸಲಾದ ದಿನವೇ ತಿನ್ನಬೇಕು. ಅವನು ಅದರಲ್ಲಿ ಬೆಳಗಿನವರೆಗೆ ಯಾವುದನ್ನೂ ಉಳಿಸಬಾರದು.</verse>
				<verse number="16">“ ‘ಆದರೆ ಅವನ ಯಜ್ಞ ಸಮರ್ಪಣೆಯು ಒಂದು ಹರಕೆಯಾಗಿದ್ದರೆ ಇಲ್ಲವೆ ಸ್ವಯಿಚ್ಛೆಯಾದ ಸಮರ್ಪಣೆಯಾಗಿದ್ದರೆ ಅವನು ತನ್ನ ಯಜ್ಞವನ್ನು ಅರ್ಪಿಸಿದ ದಿನದಲ್ಲಿಯೇ ಅದನ್ನು ತಿನ್ನಬೇಕು. ಅದರಲ್ಲಿ ಉಳಿದದ್ದನ್ನು ಮಾರನೆಯ ದಿನದಲ್ಲಿ ಸಹ ತಿನ್ನಬಹುದು.</verse>
				<verse number="17">ಆದರೆ ಉಳಿದಿರುವ ಯಜ್ಞದ ಮಾಂಸವನ್ನು ಮೂರನೆಯ ದಿನದಲ್ಲಿ ಬೆಂಕಿಯಿಂದ ಸುಡಬೇಕು.</verse>
				<verse number="18">ತನ್ನ ಸಮಾಧಾನ ಬಲಿಯ ಯಜ್ಞದ ಮಾಂಸದಲ್ಲಿ ಯಾವ ಭಾಗವನ್ನಾದರೂ ಮೂರನೆಯ ದಿನದಲ್ಲಿ ತಿಂದರೆ ಅದು ಬಲಿಯಾಗುವುದಿಲ್ಲ, ಇಲ್ಲವೆ ಅರ್ಪಿಸುವವನ ಲೆಕ್ಕಕ್ಕೆ ಸೇರುವುದಿಲ್ಲ. ಅದು ಅಶುಚಿಯಾಗಿರುವುದು, ಅದನ್ನು ತಿನ್ನುವವನು ತನ್ನ ಅಪರಾಧವನ್ನು ಹೊರುವನು.</verse>
				<verse number="19">“ ‘ಅಶುದ್ಧವಾದ ಯಾವುದನ್ನಾದರೂ ಮುಟ್ಟಿದ ಮಾಂಸವನ್ನು ತಿನ್ನಬಾರದು, ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ಮಾಂಸದ ವಿಷಯದಲ್ಲಿ ಶುದ್ಧವಾಗಿರುವವರೆಲ್ಲರೂ ಅದರಲ್ಲಿ ತಿನ್ನಬಹುದು.</verse>
				<verse number="20">ಆದರೆ ಯೆಹೋವ ದೇವರಿಗೆ ಸಂಬಂಧಪಟ್ಟ ಸಮಾಧಾನದ ಬಲಿಯ ಯಜ್ಞದ ಮಾಂಸವನ್ನು ಯಾವನಾದರೂ ಅಶುದ್ಧನಾಗಿದ್ದು ತಿನ್ನುವನೋ, ಅಂಥವರನ್ನು ತಮ್ಮ ಜನರಿಂದ ತೆಗೆದುಹಾಕಬೇಕು.</verse>
				<verse number="21">ಇದಲ್ಲದೆ ಯಾವನಾದರೂ ಮನುಷ್ಯನ ಅಶುದ್ಧ ವಸ್ತುವನ್ನೇ ಇಲ್ಲವೆ ಯಾವುದೇ ಹೊಲೆಯಾದ ಅಶುದ್ಧವಸ್ತುವನ್ನಾಗಲಿ ಮುಟ್ಟಿದರೆ ಮತ್ತು ಯೆಹೋವ ದೇವರಿಗೆ ಸಂಬಂಧಿಸಿದ ಸಮಾಧಾನ ಬಲಿಯ ಯಜ್ಞದ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು,’ ” ಎಂದರು.</verse>
				<verse number="22">ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,</verse>
				<verse number="23">“ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ನೀವು ಎತ್ತು ಇಲ್ಲವೆ ಕುರಿ ಇಲ್ಲವೆ ಮೇಕೆಗಳ ಕೊಬ್ಬನ್ನು ತಿನ್ನಬಾರದು.</verse>
				<verse number="24">ತಾನಾಗಿಯೇ ಸತ್ತ ಪ್ರಾಣಿಯ ಕೊಬ್ಬನ್ನೂ, ಕಾಡುಮೃಗಗಳು ಸೀಳಿದ್ದರ ಕೊಬ್ಬನ್ನೂ ಬೇರೆ ಯಾವುದಕ್ಕಾದರೂ ಉಪಯೋಗಿಸಬಹುದು. ಆದರೆ ನೀವು ಅದನ್ನು ಎಷ್ಟು ಮಾತ್ರವೂ ತಿನ್ನಬಾರದು.</verse>
				<verse number="25">ಏಕೆಂದರೆ ಮನುಷ್ಯರು ಯೆಹೋವ ದೇವರಿಗೆ ಬೆಂಕಿಯಿಂದ ಸಮರ್ಪಿಸಿದ ಬಲಿ, ಪ್ರಾಣಿಯ ಕೊಬ್ಬನ್ನು ಯಾವನಾದರೂ ತಿಂದರೆ, ಅಂಥವರನ್ನು ತಮ್ಮ ಜನರಿಂದ ತೆಗೆದುಹಾಕಬೇಕು.</verse>
				<verse number="26">ಇದಲ್ಲದೆ ನೀವು ಯಾವ ತರದ ರಕ್ತವನ್ನೂ ಅಂದರೆ ಅದು ಪಕ್ಷಿಯದಾಗಿರಲಿ, ಪ್ರಾಣಿಯದಾಗಿರಲಿ ನಿಮ್ಮ ಯಾವ ನಿವಾಸಗಳಲ್ಲಿಯೂ ತಿನ್ನಬಾರದು.</verse>
				<verse number="27">ಯಾವುದೇ ತರದ ರಕ್ತವನ್ನು ತಿಂದವನು ಯಾವನೇ ಆಗಿರಲಿ, ಅಂಥವನನ್ನು ತನ್ನ ಜನರಿಂದ ತೆಗೆದುಹಾಕಬೇಕು.’ ”</verse>
				<verse number="28">ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,</verse>
				<verse number="29">“ನೀನು ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ಯೆಹೋವ ದೇವರಿಗೆ ಸಮಾಧಾನ ಬಲಿಯನ್ನು ಅರ್ಪಿಸುವವನು, ಸಮಾಧಾನ ಬಲಿಯ ತನ್ನ ಕಾಣಿಕೆಯನ್ನು ಯೆಹೋವ ದೇವರಿಗೆ ತರಬೇಕು.</verse>
				<verse number="30">ಅವನು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳನ್ನು ತನ್ನ ಸ್ವಂತ ಕೈಗಳಿಂದಲೇ ತರಬೇಕು. ಯೆಹೋವ ದೇವರ ಮುಂದೆ ನೈವೇದ್ಯರೂಪವಾಗಿ ನಿವಾಳಿಸುವದಕ್ಕೆ ಕೊಬ್ಬಿನೊಂದಿಗೆ ಎದೆಯನ್ನು ತರಬೇಕು.</verse>
				<verse number="31">ಯಾಜಕನು ಆ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು. ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳಿಗೆ ಸೇರುವುದು.</verse>
				<verse number="32">ಬಲಭುಜವನ್ನು ನೀವು ಯಾಜಕನಿಗೆ ಸಮಾಧಾನದ ಬಲಿಯಾಗಿ ಕೊಡಬೇಕು.</verse>
				<verse number="33">ಸಮಾಧಾನದ ಬಲಿಗಳ ರಕ್ತವನ್ನೂ, ಕೊಬ್ಬನ್ನೂ ಸಮರ್ಪಿಸುವ ಆರೋನನ ಪುತ್ರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ.</verse>
				<verse number="34">ಏಕೆಂದರೆ ನೈವೇದ್ಯ ಮಾಡಿದ ಎದೆಯನ್ನು ಮತ್ತು ನಿವಾಳಿಸುವ ಭುಜವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಬಲಿಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಯಾಜಕನಾದ ಆರೋನನಿಗೂ, ಅವನ ಪುತ್ರರಿಗೂ ಇಸ್ರಾಯೇಲರಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಅವರಿಗೆ ಕೊಟ್ಟಿದ್ದೇನೆ.’ ”</verse>
				<verse number="35">ಆರೋನನ ಅಭಿಷೇಕದ ಮತ್ತು ಅವನ ಮಕ್ಕಳ ಅಭಿಷೇಕದ ದಿನದಲ್ಲಿ ಅವರು ತಮ್ಮನ್ನು ಯಾಜಕನ ಉದ್ಯೋಗದ ಸೇವೆಗಾಗಿ ಯೆಹೋವ ದೇವರಿಗೆ ಒಪ್ಪಿಸಿಕೊಳ್ಳುವಾಗ, ಯೆಹೋವ ದೇವರಿಗೆ ಬೆಂಕಿಯಿಂದ ಸಮರ್ಪಿಸುವ ಬಲಿಗಳಲ್ಲಿ ಇರುವ ಪಾಲು ಇದೆ.</verse>
				<verse number="36">ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಯೆಹೋವ ದೇವರು ಇಸ್ರಾಯೇಲರಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾರೆ.</verse>
				<verse number="37">ದಹನಬಲಿ, ಧಾನ್ಯ ಬಲಿ, ಪಾಪ ಪರಿಹಾರದ ಬಲಿ, ಪ್ರಾಯಶ್ಚಿತ್ತದ ಬಲಿ, ಪ್ರತಿಷ್ಠೆಗಳ ಮತ್ತು ಸಮಾಧಾನದ ಬಲಿಗಳ ಉಪದೇಶಗಳು ಇವೇ.</verse>
				<verse number="38">ಇವುಗಳನ್ನು ಯೆಹೋವ ದೇವರು ಇಸ್ರಾಯೇಲರಿಗೆ ಅವರು ತಮ್ಮ ಕಾಣಿಕೆಗಳನ್ನು ಸಮರ್ಪಿಸುವಂತೆ ಆಜ್ಞಾಪಿಸಿದ ದಿನದಲ್ಲಿ ಸೀನಾಯಿ ಮರುಭೂಮಿಯ ಸೀನಾಯಿ ಬೆಟ್ಟದಲ್ಲಿ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದರು.</verse>
			</chapter>
			<chapter number="8">
				<verse number="1">ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,</verse>
				<verse number="2">“ಆರೋನನನ್ನೂ, ಅವನೊಂದಿಗೆ ಅವನ ಪುತ್ರರನ್ನೂ, ಉಡುಪುಗಳನ್ನೂ, ಅಭಿಷೇಕ ತೈಲವನ್ನೂ, ಪಾಪ ಪರಿಹಾರದ ಬಲಿಗಾಗಿ ಹೋರಿಯನ್ನೂ ಎರಡು ಟಗರುಗಳನ್ನೂ ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯನ್ನೂ ತೆಗೆದುಕೋ.</verse>
				<verse number="3">ಎಲ್ಲಾ ಸಭೆಯನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸು,” ಎಂದರು.</verse>
				<verse number="4">ಆಗ ಮೋಶೆಯು, ಯೆಹೋವ ದೇವರು ತನಗೆ ಆಜ್ಞಾಪಿಸಿದಂತೆಯೇ ಮಾಡಿದನು. ಸಭೆಯು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಕೂಡಿಬಂದಿತು.</verse>
				<verse number="5">ಮೋಶೆಯು ಸಭೆಗೆ, “ಯೆಹೋವ ದೇವರು ಮಾಡುವುದಕ್ಕೆ ಆಜ್ಞಾಪಿಸಿರುವುದು ಇದೇ.”</verse>
				<verse number="6">ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಕರೆದುಕೊಂಡು ಬಂದು, ಸ್ನಾನಮಾಡಿಸಿ,</verse>
				<verse number="7">ಆರೋನನಿಗೆ ನಿಲುವಂಗಿಯನ್ನು ಹೊದಿಸಿ, ನಡುಕಟ್ಟಿನಿಂದ ಅವನ ನಡುವನ್ನು ಕಟ್ಟಿ, ಅವನಿಗೆ ಮೇಲಂಗಿಯನ್ನು ತೊಡಿಸಿ, ಅವನ ಮೇಲೆ ಏಫೋದನ್ನು ಹಾಕಿ, ಏಫೋದಿನ ಕಲಾತ್ಮಕವಾದ ನಡುಕಟ್ಟಿನಿಂದ ಅವನ ನಡುವನ್ನೂ ಕಟ್ಟಿ, ಅದರಿಂದ ಅವನನ್ನು ಬಿಗಿದನು.</verse>
				<verse number="8">ಅವನ ಮೇಲೆ ಎದೆಪದಕವನ್ನು ಹಾಕಿ, ಆ ಎದೆಪದಕದಲ್ಲಿ ಊರೀಮ್ ಮತ್ತು ತುಮ್ಮೀಮ್ ಇವುಗಳನ್ನೂ ಸಹ ಹಾಕಿದನು.</verse>
				<verse number="9">ಅವನ ತಲೆಯ ಮೇಲೆ ಮುಂಡಾಸವನ್ನು ಇಟ್ಟು, ಆ ಮುಂಡಾಸದ ಮೇಲೆ ಅಂದರೆ ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನೂ, ಪವಿತ್ರವಾದ ಕಿರೀಟವನ್ನೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಇಟ್ಟನು.</verse>
				<verse number="10">ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ, ಅದರೊಳಗಿರುವುದೆಲ್ಲವನ್ನೂ ಅಭಿಷೇಕಿಸಿ, ಅವುಗಳನ್ನು ಪವಿತ್ರ ಮಾಡಿದನು.</verse>
				<verse number="11">ಅವನು ಅದರಿಂದ ಬಲಿಪೀಠದ ಮೇಲೆ ಏಳು ಸಾರಿ ಚಿಮುಕಿಸಿ, ಬಲಿಪೀಠವನ್ನೂ, ಅದರ ಎಲ್ಲಾ ಪಾತ್ರೆಗಳನ್ನೂ, ಗಂಗಾಳವನ್ನೂ, ಅದರ ಕಾಲನ್ನೂ ಅಭಿಷೇಕಿಸಿ, ಅವುಗಳನ್ನು ಪವಿತ್ರ ಮಾಡಿದನು.</verse>
				<verse number="12">ಅವನು ಅಭಿಷೇಕ ತೈಲದಿಂದ ಆರೋನನ ತಲೆಯ ಮೇಲೆ ಸುರಿದು, ಅವನನ್ನು ಪವಿತ್ರ ಮಾಡುವುದಕ್ಕಾಗಿ ಅವನನ್ನು ಅಭಿಷೇಕಿಸಿದನು.</verse>
				<verse number="13">ಮೋಶೆಯು ಆರೋನನ ಪುತ್ರರನ್ನು ಕರೆದುಕೊಂಡು ಬಂದು ಅವರಿಗೆ ನಿಲುವಂಗಿಗಳನ್ನು ತೊಡಿಸಿ, ಅವರ ನಡುಗಳನ್ನು ನಡುಕಟ್ಟುಗಳಿಂದ ಕಟ್ಟಿ, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಅವರ ಮೇಲೆ ಕುಲಾಯಿಗಳನ್ನು ಹಾಕಿದನು.</verse>
				<verse number="14">ಪಾಪ ಪರಿಹಾರದ ಬಲಿಗಾಗಿ ಅವನು ಹೋರಿಯನ್ನು ತಂದನು. ಆರೋನನೂ ಅವನ ಪುತ್ರರೂ ಪಾಪ ಪರಿಹಾರದ ಬಲಿಗಾಗಿ ಆ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.</verse>
				<verse number="15">ಆಗ ಅವನು ಅದನ್ನು ವಧಿಸಿದನು. ಮೋಶೆಯು ಅದರ ರಕ್ತವನ್ನು ತೆಗೆದುಕೊಂಡು, ಬಲಿಪೀಠದ ಸುತ್ತಲೂ ಇರುವ ಕೊಂಬುಗಳ ಮೇಲೆ ತನ್ನ ಬೆರಳಿನಿಂದ ಹಚ್ಚಿ, ಬಲಿಪೀಠವನ್ನು ಶುದ್ಧೀಕರಿಸಿ, ಉಳಿದ ರಕ್ತವನ್ನು ಬಲಿಪೀಠದ ಅಡಿಯಲ್ಲಿ ಹೊಯ್ದನು. ಅದರ ಮೇಲೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಅದನ್ನು ಪವಿತ್ರ ಮಾಡಿದನು.</verse>
				<verse number="16">ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಮೋಶೆಯು ತೆಗೆದುಕೊಂಡು ಬಲಿಪೀಠದ ಮೇಲೆ ಸುಟ್ಟನು.</verse>
				<verse number="17">ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಹೋರಿಯ ಮಾಂಸವನ್ನೂ, ಅದರ ಚರ್ಮವನ್ನೂ, ಅದರ ಸಗಣಿಯನ್ನೂ ಅವನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.</verse>
				<verse number="18">ದಹನಬಲಿಗಾಗಿ ಟಗರನ್ನು ತಂದನು. ಆರೋನನು ಮತ್ತು ಅವನ ಪುತ್ರರು ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.</verse>
				<verse number="19">ಅವನು ಅದನ್ನು ವಧಿಸಿದನು. ತರುವಾಯ ಮೋಶೆಯು ರಕ್ತವನ್ನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಿದನು.</verse>
				<verse number="20">ಅವನು ಆ ಟಗರನ್ನು ತುಂಡುತುಂಡಾಗಿ ಮಾಡಿದನು. ಮೋಶೆಯು ತಲೆಯನ್ನು, ಆ ತುಂಡುಗಳನ್ನು, ಆ ಕೊಬ್ಬನ್ನು ಸುಟ್ಟನು.</verse>
				<verse number="21">ಅವನು ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಆ ಟಗರನ್ನು ಪೂರ್ಣವಾಗಿ ಬಲಿಪೀಠದ ಮೇಲೆ ಸುಟ್ಟನು. ಇದು ದಹನಬಲಿಯಾಗಿ ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸುವಾಸನೆಯ ಸಮರ್ಪಣೆಯಾಗಿತ್ತು.</verse>
				<verse number="22">ಅವನು ಪ್ರತಿಷ್ಠೆಯ ಟಗರಾದ ಇನ್ನೊಂದು ಟಗರನ್ನು ತಂದನು. ಆಗ ಆರೋನನೂ, ಅವನ ಪುತ್ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು.</verse>
				<verse number="23">ಮೋಶೆಯು ಅದನ್ನು ವಧಿಸಿ, ಅದರ ರಕ್ತವನ್ನು ತೆಗೆದುಕೊಂಡು ಅದನ್ನು ಆರೋನನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು.</verse>
				<verse number="24">ಮೋಶೆಯು ಆರೋನನ ಪುತ್ರರನ್ನು ಕರೆತಂದು ಅವರ ಬಲಗಿವಿಯ ತುದಿಯ ಮೇಲೆಯೂ, ಅವರವರ ಬಲಗೈಯ ಹೆಬ್ಬೆರಳಿಗೂ, ಅವರವರ ಬಲಗಾಲಿನ ಹೆಬ್ಬೆಟ್ಟಿಗೂ ಆ ರಕ್ತವನ್ನು ಹಚ್ಚಿ, ಆ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಿದನು.</verse>
				<verse number="25">ಅವನು ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲದೊಡೆಯನ್ನೂ ತೆಗೆದುಕೊಂಡನು.</verse>
				<verse number="26">ಯೆಹೋವ ದೇವರ ಸನ್ನಿಧಿಯಲ್ಲಿರುವ ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯೊಳಗಿಂದ ಒಂದು ರೊಟ್ಟಿಯನ್ನೂ ಎಣ್ಣೆಯ ಒಂದು ಹೋಳಿಗೆಯನ್ನೂ ಒಂದು ಪೂರಿಯನ್ನೂ ತೆಗೆದುಕೊಂಡು, ಅವುಗಳನ್ನು ಕೊಬ್ಬಿನ ಮೇಲೆಯೂ, ಬಲಭುಜದ ಮೇಲೆಯೂ ಇಟ್ಟನು.</verse>
				<verse number="27">ಅದೆಲ್ಲವನ್ನೂ ಆರೋನನ ಕೈಗಳಿಗೆ ಮತ್ತು ಅವನ ಪುತ್ರರ ಕೈಗಳಿಗೆ ಕೊಟ್ಟು, ಯೆಹೋವ ದೇವರ ಮುಂದೆ ಸಮರ್ಪಣೆಗಾಗಿ ಅವುಗಳನ್ನು ನೈವೇದ್ಯ ಮಾಡಿಸಿದನು.</verse>
				<verse number="28">ಆಮೇಲೆ ಮೋಶೆಯು ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು, ಬಲಿಪೀಠದ ಮೇಲೆ ದಹನಬಲಿಯಾಗಿ ಅವುಗಳನ್ನು ಸುಟ್ಟನು. ಅವು ಯೆಹೋವ ದೇವರಿಗೆ ಬೆಂಕಿಯಿಂದ ಸಮರ್ಪಿಸಿದ ಸುಗಂಧಕರ ಪ್ರತಿಷ್ಠೆಯ ಬಲಿಯಾಗಿದ್ದವು.</verse>
				<verse number="29">ಮೋಶೆಯು ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ನಿವಾಳಿಸಿದನು. ಏಕೆಂದರೆ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿಷ್ಠಿತ ಟಗರು ಮೋಶೆಯ ಪಾಲಾಗಿತ್ತು.</verse>
				<verse number="30">ಮೋಶೆಯು ಅಭಿಷೇಕ ತೈಲವನ್ನೂ, ಬಲಿಪೀಠದ ಮೇಲಿರುವ ರಕ್ತವನ್ನೂ ತೆಗೆದುಕೊಂಡು, ಆರೋನನ ಮೇಲೆಯೂ, ಅವನ ಉಡುಪುಗಳ ಮೇಲೆಯೂ ಅವನೊಂದಿಗೆ ಅವನ ಪುತ್ರರ ಮೇಲೆಯೂ, ಅವರ ಉಡುಪುಗಳ ಮೇಲೆಯೂ ಚಿಮುಕಿಸಿದನು. ಆರೋನನನ್ನೂ, ಅವನ ಉಡುಪುಗಳನ್ನೂ, ಅವನೊಂದಿಗೆ ಅವನ ಪುತ್ರರನ್ನೂ, ಅವನ ಪುತ್ರರ ಉಡುಪುಗಳನ್ನೂ ಪವಿತ್ರ ಮಾಡಿದನು.</verse>
				<verse number="31">ಮೋಶೆಯು ಆರೋನನಿಗೂ, ಅವನ ಪುತ್ರರಿಗೂ, “ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಆ ಮಾಂಸವನ್ನು ಬೇಯಿಸಿರಿ. ಅದನ್ನು ಪ್ರತಿಷ್ಠಿತ ಬುಟ್ಟಿಯೊಳಗಿರುವ ರೊಟ್ಟಿಯೊಡನೆ ತಿನ್ನಬೇಕು. ನಾನು ಆಜ್ಞಾಪಿಸಿ ಹೇಳಿದಂತೆ, ‘ಆರೋನನು ಮತ್ತು ಅವನ ಪುತ್ರರು ಅದನ್ನು ತಿನ್ನಬೇಕು.’</verse>
				<verse number="32">ಮಾಂಸದಲ್ಲಿಯೂ, ರೊಟ್ಟಿಯಲ್ಲಿಯೂ ಉಳಿದದ್ದನ್ನು ನೀವು ಬೆಂಕಿಯಿಂದ ಸುಡಬೇಕು.</verse>
				<verse number="33">ಇದಲ್ಲದೆ ನಿಮ್ಮ ಪ್ರತಿಷ್ಠೆಯ ದಿನದ ಕೊನೆಗೊಳ್ಳುವುದಕ್ಕೆ ಏಳು ದಿವಸ ಹಿಡಿಯುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲಿನಿಂದ ಹೊರಗೆ ಹೋಗಬಾರದು.</verse>
				<verse number="34">ನಿಮ್ಮ ದೋಷಪರಿಹಾರಕ್ಕಾಗಿ ಈ ಹೊತ್ತು ಏನೇನು ನಡೆಯಿತೋ ಅದನ್ನು ಏಳು ದಿನವೂ ನಡೆಸಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದಾರೆ.</verse>
				<verse number="35">ಆದ್ದರಿಂದ ಏಳು ದಿನಗಳವರೆಗೆ ನೀವು ಸಾಯದಂತೆ ಹಗಲೂ ರಾತ್ರಿ ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಆಜ್ಞೆಯನ್ನು ಕೈಗೊಳ್ಳಬೇಕು. ಏಕೆಂದರೆ ಹಾಗೆಯೇ ನನಗೆ ಅಪ್ಪಣೆಯಾಗಿದೆ,” ಎಂದನು.</verse>
				<verse number="36">ಹೀಗೆ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನೂ, ಆರೋನನೂ, ಅವನ ಪುತ್ರರೂ ಮಾಡಿದರು.</verse>
			</chapter>
			<chapter number="9">
				<verse number="1">ಎಂಟನೆಯ ದಿನದಲ್ಲಿ ಮೋಶೆಯು ಆರೋನನನ್ನೂ ಅವನ ಪುತ್ರರನ್ನೂ ಮತ್ತು ಇಸ್ರಾಯೇಲಿನ ಹಿರಿಯರನ್ನೂ ಕರೆದನು.</verse>
				<verse number="2">ಅವನು ಆರೋನನಿಗೆ, “ನೀನು ಪಾಪ ಪರಿಹಾರದ ಬಲಿಗಾಗಿ ಒಂದು ಎಳೆಯ ಕರುವನ್ನೂ ಮತ್ತು ದಹನಬಲಿಗಾಗಿ ಕಳಂಕರಹಿತ ಟಗರನ್ನೂ ತೆಗೆದುಕೊಂಡು ಅವುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸು.</verse>
				<verse number="3">ನೀನು ಇಸ್ರಾಯೇಲರಿಗೆ ಹೇಳಬೇಕಾದದ್ದೇನೆಂದರೆ: ‘ಪಾಪ ಪರಿಹಾರದ ಬಲಿಗಾಗಿ ಹೋತವನ್ನೂ ದಹನಬಲಿಗಾಗಿ ಕಳಂಕರಹಿತ ಒಂದು ವರ್ಷದ ಕರುವನ್ನೂ ಒಂದು ವರ್ಷದ ಕುರಿಮರಿಯನ್ನೂ ತೆಗೆದುಕೊಳ್ಳಬೇಕು.</verse>
				<verse number="4">ಯೆಹೋವ ದೇವರ ಮುಂದೆ ಯಜ್ಞಕ್ಕೆ ಸಮಾಧಾನ ಬಲಿಗಾಗಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸಹ ತೆಗೆದುಕೊಳ್ಳಬೇಕು. ಆಹಾರದ ಬಲಿ ಎಣ್ಣೆಯೊಂದಿಗೆ ಬೆರೆತಿರಬೇಕು. ಏಕೆಂದರೆ ಈ ದಿನವೇ ಯೆಹೋವ ದೇವರು ನಿಮಗೆ ಕಾಣಿಸಿಕೊಳ್ಳುವರು,’ ” ಎಂದನು.</verse>
				<verse number="5">ಅವರು ಮೋಶೆಯು ಆಜ್ಞಾಪಿಸಿದವುಗಳನ್ನು ದೇವದರ್ಶನದ ಗುಡಾರದ ಮುಂದೆ ತಂದರು. ಸಮೂಹವೆಲ್ಲವೂ ಹತ್ತಿರ ಬಂದು ಯೆಹೋವ ದೇವರ ಮುಂದೆ ನಿಂತಿತು.</verse>
				<verse number="6">ಮೋಶೆ ಅವರಿಗೆ, “ಯೆಹೋವ ದೇವರು ಆಜ್ಞಾಪಿಸಿದ ಸಂಗತಿಯು ಇದೇ. ಇದನ್ನು ನೀವು ಮಾಡಿರಿ. ಯೆಹೋವ ದೇವರ ಮಹಿಮೆಯು ನಿಮಗೆ ಕಾಣಿಸಿಕೊಳ್ಳುವುದು,” ಎಂದನು.</verse>
				<verse number="7">ಮೋಶೆಯು ಆರೋನನಿಗೆ, “ಬಲಿಪೀಠದ ಕಡೆಗೆ ಹೋಗಿ, ಯೆಹೋವ ದೇವರು ಆಜ್ಞಾಪಿಸಿದಂತೆಯೇ ನಿನ್ನ ಪಾಪ ಪರಿಹಾರದ ಬಲಿಯನ್ನೂ ದಹನಬಲಿಯನ್ನೂ ಅರ್ಪಿಸು. ನಿನಗಾಗಿ ಪ್ರಾಯಶ್ಚಿತ್ತವನ್ನು ಮಾಡು, ಜನರ ಸಮರ್ಪಣೆಗಳನ್ನು ಸಮರ್ಪಿಸಿ, ಅವರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು,” ಎಂದನು.</verse>
				<verse number="8">ಆದ್ದರಿಂದ ಆರೋನನು ಬಲಿಪೀಠದ ಕಡೆಗೆ ಹೋಗಿ, ತನಗಾಗಿ ಪಾಪ ಪರಿಹಾರದ ಬಲಿಯಾದ ಕರುವನ್ನು ವಧಿಸಿದನು.</verse>
				<verse number="9">ಆಗ ಆರೋನನ ಪುತ್ರರು ಅವನ ಬಳಿಗೆ ರಕ್ತವನ್ನು ತಂದರು. ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಬಲಿಪೀಠದ ಕೊಂಬುಗಳಿಗೆ ಹಚ್ಚಿ, ಬಲಿಪೀಠದ ಅಡಿಯಲ್ಲಿ ಉಳಿದ ರಕ್ತವನ್ನು ಹೊಯ್ದನು.</verse>
				<verse number="10">ಅದರ ಪಾಪ ಪರಿಹಾರದ ಬಲಿಯ ಕೊಬ್ಬು, ಮೂತ್ರಪಿಂಡಗಳು ಮತ್ತು ಕಾಳಿಜದ ಹತ್ತಿರವಿರುವ ಕೊಬ್ಬು, ಇವುಗಳನ್ನು ಅವನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ, ಬಲಿಪೀಠದ ಮೇಲೆ ಸುಟ್ಟನು.</verse>
				<verse number="11">ಮಾಂಸವನ್ನೂ ಚರ್ಮವನ್ನೂ ಅವನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟನು.</verse>
				<verse number="12">ಅವನು ದಹನಬಲಿಯನ್ನು ವಧಿಸಿದಾಗ, ಆರೋನನ ಪುತ್ರರು ಅವನಿಗೆ ರಕ್ತವನ್ನು ತಂದು ಕೊಟ್ಟರು. ಅದನ್ನು ಅವನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಿದನು.</verse>
				<verse number="13">ಅವರು ಅವನಿಗೆ ದಹನಬಲಿಯನ್ನೂ ಅವುಗಳ ತುಂಡುಗಳೊಂದಿಗೆ ತಲೆಯನ್ನೂ ತಂದು ಕೊಡಲು, ಅವನು ಅವುಗಳನ್ನು ಬಲಿಪೀಠದ ಮೇಲೆ ಸುಟ್ಟನು.</verse>
				<verse number="14">ಅವನು ಕರುಳುಗಳನ್ನು ಮತ್ತು ಕಾಲುಗಳನ್ನು ತೊಳೆದು, ಅವುಗಳನ್ನು ದಹನಬಲಿಯ ಜೊತೆ ಮೇಲಿನ ಬಲಿಪೀಠದ ಮೇಲೆ ಸುಟ್ಟನು.</verse>
				<verse number="15">ಅದಾದ ಮೇಲೆ ಆರೋನನು ಜನರಿಗಾಗಿ ಅರ್ಪಿಸಿದ ಬಲಿಯನ್ನು ತಂದು, ಹೋತವನ್ನು ತೆಗೆದುಕೊಂಡು, ಜನರಿಗಾಗಿ ಪಾಪ ಪರಿಹಾರದ ಬಲಿಯಾಗಿರುವುದನ್ನು ವಧಿಸಿ, ಮೊದಲನೆಯದರ ಹಾಗೆ ಅದನ್ನು ಸಮರ್ಪಿಸಿದನು.</verse>
				<verse number="16">ಅವನು ದಹನಬಲಿಯನ್ನು ತಂದು, ಅದನ್ನು ವಿಧಿಬದ್ಧವಾಗಿ ಸಮರ್ಪಿಸಿದನು.</verse>
				<verse number="17">ಅವನು ಧಾನ್ಯ ಸಮರ್ಪಣೆಯ ಬಲಿಯನ್ನು ತಂದು, ಅದರಲ್ಲಿ ಒಂದು ಹಿಡಿ ತೆಗೆದುಕೊಂಡು, ಬಲಿಪೀಠದ ಮೇಲೆ ಬೆಳಗಿನ ದಹನಬಲಿ ಯಜ್ಞದ ಬಳಿಯಲ್ಲಿ ಅದನ್ನು ಹೋಮ ಮಾಡಿದನು.</verse>
				<verse number="18">ಅವನು ಜನರಿಗಾಗಿದ್ದ ಹೋರಿ ಮತ್ತು ಟಗರನ್ನು ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು. ಆರೋನನ ಪುತ್ರರು ರಕ್ತವನ್ನು ಅವನ ಬಳಿಗೆ ತರಲು, ಅದನ್ನು ಅವನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಿದನು.</verse>
				<verse number="19">ಹೋರಿಯ ಮತ್ತು ಟಗರಿನ ಕೊಬ್ಬನ್ನೂ ಹಿಂಭಾಗದ ಕೊಬ್ಬನ್ನೂ ಮತ್ತು ಕರುಳುಗಳ ಸುತ್ತಲಿನ ಕೊಬ್ಬನ್ನೂ ಮೂತ್ರಪಿಂಡಗಳ ಮತ್ತು ಕಾಳಿಜದ ಹತ್ತಿರವಿರುವ ಕೊಬ್ಬನ್ನೂ</verse>
				<verse number="20">ಕೊಬ್ಬನ್ನು ಎದೆಯ ಭಾಗಗಳ ಮೇಲೆ ಇಡಲು, ಆರೋನನು ಆ ಕೊಬ್ಬನ್ನು ಬಲಿಪೀಠದ ಮೇಲೆ ಸುಟ್ಟನು.</verse>
				<verse number="21">ಎದೆಯ ಭಾಗಗಳನ್ನು, ಬಲತೊಡೆಗಳನ್ನು ಆರೋನನು, ಮೋಶೆ ಆಜ್ಞಾಪಿಸಿದಂತೆ ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿದನು.</verse>
				<verse number="22">ಆರೋನನು ಜನರ ಕಡೆಗೆ ತನ್ನ ಕೈಗಳನ್ನು ಎತ್ತಿ, ಅವರನ್ನು ಆಶೀರ್ವದಿಸಿದನು. ಪಾಪ ಪರಿಹಾರದ ಬಲಿಯನ್ನೂ ದಹನಬಲಿಯನ್ನೂ ಮತ್ತು ಸಮಾಧಾನದ ಬಲಿಯನ್ನೂ ಸಮರ್ಪಿಸಿದ ಮೇಲೆ ಇಳಿದು ಬಂದನು.</verse>
				<verse number="23">ಮೋಶೆಯೂ ಆರೋನನೂ ದೇವದರ್ಶನದ ಗುಡಾರದ ಒಳಗೆ ಹೋಗಿ, ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಯೆಹೋವ ದೇವರ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.</verse>
				<verse number="24">ಆಗ ಅಲ್ಲಿ ಬೆಂಕಿಯು ಯೆಹೋವ ದೇವರ ಸನ್ನಿಧಿಯಿಂದ ಬಂದು, ಬಲಿಪೀಠದ ಮೇಲಿದ್ದ ದಹನಬಲಿಯನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಇದನ್ನು ಜನರೆಲ್ಲರೂ ಕಂಡಾಗ, ಅವರು ಆನಂದದಿಂದ ಜಯಘೋಷ ಮಾಡಿ ಅಡ್ಡಬಿದ್ದರು.</verse>
			</chapter>
			<chapter number="10">
				<verse number="1">ಆರೋನನ ಪುತ್ರರಾದ ನಾದಾಬ್ ಮತ್ತು ಅಬೀಹೂ ತಮ್ಮ ತಮ್ಮ ಧೂಪ ಪಾತ್ರೆಗಳನ್ನು ತೆಗೆದುಕೊಂಡು, ಅದರಲ್ಲಿ ಬೆಂಕಿಯನ್ನು ಹಾಕಿ, ಅದರಲ್ಲಿ ಸುವಾಸನೆಯ ಧೂಪವನ್ನು ಹಾಕಿ, ಯೆಹೋವ ದೇವರು ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸಿದರು.</verse>
				<verse number="2">ಆಗ ಯೆಹೋವ ದೇವರ ಬಳಿಯಿಂದ ಬೆಂಕಿಯು ಹೊರಟುಬಂದು ಅವರನ್ನು ದಹಿಸಿಬಿಟ್ಟಿತು. ಅವರು ಯೆಹೋವ ದೇವರ ಮುಂದೆ ಮರಣಹೊಂದಿದರು.</verse>
				<verse number="3">ತರುವಾಯ ಮೋಶೆಯು ಆರೋನನಿಗೆ, “ಯೆಹೋವ ದೇವರು ಹೇಳಿದ್ದು ಇದೇ. ಅದೇನೆಂದರೆ: “ ‘ನನ್ನನ್ನು ಸಮೀಪಿಸುವವರ ಮುಖಾಂತರ ನನ್ನ ಪರಿಶುದ್ಧತೆಯನ್ನು ತೋರಿಸುವೆನು ಮತ್ತು ಜನರೆಲ್ಲರ ಮುಂದೆ ನನ್ನ ಮಹಿಮೆಯನ್ನು ತೋರ್ಪಡಿಸುವೆನು,’ ” ಎಂದನು. ಆಗ ಆರೋನನು ಮಾತನಾಡದೆ ಸುಮ್ಮನಿದ್ದನು.</verse>
				<verse number="4">ಮೋಶೆಯು ಆರೋನನ ಚಿಕ್ಕಪ್ಪನಾದ ಉಜ್ಜೀಯೇಲನ ಮಕ್ಕಳಾದ ಮೀಶಾಯೇಲನನ್ನೂ ಎಲ್ಜಾಫಾನನನ್ನೂ ಕರೆದು, “ನಿಮ್ಮ ಸಹೋದರರನ್ನು ಪರಿಶುದ್ಧ ಸ್ಥಳದಿಂದ ಪಾಳೆಯದ ಹೊರಗೆ ಹೊತ್ತುಕೊಂಡು ಹೋಗಿರಿ,” ಎಂದನು.</verse>
				<verse number="5">ಮೋಶೆಯು ಹೇಳಿದ ಹಾಗೆಯೇ, ಅವರು ಹತ್ತಿರಕ್ಕೆ ಹೋಗಿ ಅವರನ್ನು ಅವರ ಮೇಲಂಗಿಗಳೊಂದಿಗೆ ಹೊತ್ತುಕೊಂಡು ಪಾಳೆಯದ ಹೊರಗೆ ಹೋದರು.</verse>
				<verse number="6">ಆಗ ಮೋಶೆಯು ಆರೋನನಿಗೂ ಅವನ ಪುತ್ರರಾದ ಎಲಿಯಾಜರನಿಗೂ ಈತಾಮಾರನಿಗೂ, “ನೀವು ಮರಣ ಹೊಂದದಂತೆಯೂ ಕೋಪವು ಜನರೆಲ್ಲರ ಮೇಲೆ ಬಾರದಂತೆಯೂ ನೀವು ನಿಮ್ಮ ಮುಚ್ಚಿದ ತಲೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಆದರೆ ನಿಮ್ಮ ಸಹೋದರರಾಗಿರುವ ಇಸ್ರಾಯೇಲಿನ ಮನೆತನದವರೆಲ್ಲರು ಯೆಹೋವ ದೇವರು ಉರಿಸಿದ ಬೆಂಕಿಯ ನಾಶದ ನಿಮಿತ್ತ ಗೋಳಾಡಲಿ.</verse>
				<verse number="7">ನೀವು ಮರಣ ಹೊಂದದಂತೆ ದೇವದರ್ಶನದ ಗುಡಾರದ ಬಾಗಿಲಿನಿಂದ ಹೊರಗೆ ಹೋಗಬಾರದು. ಏಕೆಂದರೆ ಯೆಹೋವ ದೇವರ ಅಭಿಷೇಕ ತೈಲವು ನಿಮ್ಮ ಮೇಲಿದೆ,” ಎಂದನು. ಆಗ ಅವರು ಮೋಶೆಯ ಮಾತಿನ ಪ್ರಕಾರವೇ ಮಾಡಿದರು.</verse>
				<verse number="8">ಯೆಹೋವ ದೇವರು ಮಾತನಾಡಿ ಆರೋನನಿಗೆ,</verse>
				<verse number="9">“ನೀನು ಸಾಯದಂತೆ ದೇವದರ್ಶನದ ಗುಡಾರಕ್ಕೆ ಬರುವಾಗ ನೀನೂ ಇಲ್ಲವೆ ನಿನ್ನ ಪುತ್ರರೂ ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಕುಡಿಯಬಾರದು. ಇದು ನಿಮ್ಮ ವಂಶಾವಳಿಯು ಇರುವವರೆಗೂ ಶಾಶ್ವತವಾಗಿರುವ ಕಟ್ಟಳೆಯಾಗಿದೆ.</verse>
				<verse number="10">ನೀವು ಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಮಧ್ಯೆ ಇರುವ ವ್ಯತ್ಯಾಸವನ್ನು ತೋರಿಸುವುದಕ್ಕಾಗಿಯೂ</verse>
				<verse number="11">ನೀವು ಇಸ್ರಾಯೇಲರಿಗೆ ಯೆಹೋವ ದೇವರು ಮೋಶೆಯ ಕೈಗೆ ಒಪ್ಪಿಸಿ ಹೇಳಿದ ಹಾಗೆ, ಎಲ್ಲಾ ಕಟ್ಟಳೆಗಳನ್ನು ಬೋಧಿಸುವುದಕ್ಕಾಗಿಯೂ ಇರುವುದು,” ಎಂದರು.</verse>
				<verse number="12">ಮೋಶೆಯು ಆರೋನನೊಂದಿಗೂ ಉಳಿದ ಅವನ ಪುತ್ರರಾದ ಎಲಿಯಾಜರನೊಂದಿಗೂ ಈತಾಮಾರನೊಂದಿಗೂ ಮಾತನಾಡಿ, “ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಬಲಿಗಳಲ್ಲಿ ಉಳಿದಿರುವ ಧಾನ್ಯ ಸಮರ್ಪಣೆಯನ್ನು ತೆಗೆದುಕೊಳ್ಳಿರಿ ಮತ್ತು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿಯಿಲ್ಲದ ರೊಟ್ಟಿ ತಿನ್ನಿರಿ. ಏಕೆಂದರೆ ಅದು ಮಹಾಪರಿಶುದ್ಧವಾದದ್ದು.</verse>
				<verse number="13">ನೀವು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ದಹನ ಮಾಡಿದ ಯೆಹೋವ ದೇವರ ಯಜ್ಞಗಳಲ್ಲಿ ಇವು ನಿನಗೂ ನಿನ್ನ ಪುತ್ರರಿಗೂ ಸಲ್ಲತಕ್ಕವುಗಳು. ಏಕೆಂದರೆ ಹಾಗೆ ನನಗೆ ಆಜ್ಞೆಯಾಗಿದೆ.</verse>
				<verse number="14">ನೀನೂ, ನಿನ್ನೊಂದಿಗೆ ನಿನ್ನ ಪುತ್ರರೂ ನಿನ್ನ ಪುತ್ರಿಯರೂ ನೈವೇದ್ಯ ಮಾಡಿದ ಎದೆಯ ಭಾಗವನ್ನೂ, ಅರ್ಪಿಸುವ ತೊಡೆಯ ಭಾಗವನ್ನೂ ಶುದ್ಧ ಸ್ಥಳದಲ್ಲಿ ತಿನ್ನಬೇಕು. ಏಕೆಂದರೆ ಅದು ಇಸ್ರಾಯೇಲರ ಸಮಾಧಾನದ ಬಲಿಗಳಲ್ಲಿ ನಿನಗೂ ನಿನ್ನ ಪುತ್ರರಿಗೂ ಸಲ್ಲುವಂಥವುಗಳಾಗಿವೆ.</verse>
				<verse number="15">ನೈವೇದ್ಯವಾಗಿ ಅರ್ಪಿಸುವ ಎದೆಯನ್ನೂ ತೊಡೆಯನ್ನೂ ಅವರು ಬೆಂಕಿಯಿಂದ ಮಾಡಿದ ಕೊಬ್ಬಿನ ಸಮರ್ಪಣೆಗಳನ್ನು ನೈವೇದ್ಯವಾಗಿ ನಿವಾಳಿಸುವುದಕ್ಕೆ ಯೆಹೋವ ದೇವರ ಸನ್ನಿಧಿಯಲ್ಲಿ ತರಬೇಕು. ಯೆಹೋವ ದೇವರು ಆಜ್ಞಾಪಿಸಿದ ಹಾಗೆ ಅದು ನಿನಗೂ, ನಿನ್ನೊಂದಿಗೆ ನಿನ್ನ ಪುತ್ರರಿಗೂ ನಿತ್ಯ ಕಟ್ಟಳೆಯಾಗಿ ಸಿಕ್ಕಬೇಕು,” ಎಂದು ಹೇಳಿದನು.</verse>
				<verse number="16">ಅನಂತರ ಮೋಶೆಯು ಶ್ರದ್ಧೆಯಿಂದ ಪಾಪ ಪರಿಹಾರದ ಬಲಿಯ ಹೋತವನ್ನು ಹುಡುಕಿದಾಗ, ಅದು ಸುಟ್ಟು ಹೋಗಿತ್ತು. ಅವನು ಆರೋನನ ಉಳಿದ ಪುತ್ರರಾದ ಎಲಿಯಾಜರ್ ಮತ್ತು ಈತಾಮಾರನ ಮೇಲೆ ಕೋಪಗೊಂಡು, ಹೇಳಿದ್ದೇನೆಂದರೆ,</verse>
				<verse number="17">“ಅದು ಮಹಾಪರಿಶುದ್ಧವಾದ್ದರಿಂದಲೂ ಯೆಹೋವ ಸನ್ನಿಧಿಯಲ್ಲಿ ಅವರಿಗಾಗಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿಯೂ ನೀವು ಸಭೆಯ ಅಪರಾಧವನ್ನು ಹೊರುವುದಕ್ಕಾಗಿ ದೇವರು ಅದನ್ನು ಕೊಟ್ಟಿದ್ದೆಂದೂ ನೀವು ತಿಳಿದು ಪಾಪ ಪರಿಹಾರದ ಬಲಿಯನ್ನು ಪರಿಶುದ್ಧವಾದ ಸ್ಥಳದಲ್ಲಿ ಏಕೆ ತಿನ್ನಲಿಲ್ಲ?</verse>
				<verse number="18">ಇಗೋ, ಅದರ ರಕ್ತವು ಪರಿಶುದ್ಧಸ್ಥಳದ ಒಳಗೆ ತರಲಿಲ್ಲವಾದ ಕಾರಣ ನಾನು ಆಜ್ಞಾಪಿಸಿದಂತೆ ನಿಶ್ಚಯವಾಗಿ ನೀವು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕಾಗಿತ್ತು,” ಎಂದನು.</verse>
				<verse number="19">ಆಗ ಆರೋನನು ಮೋಶೆಗೆ, “ಈ ದಿನ ಅವರು ಪಾಪಪರಿಹಾರ ಬಲಿಯನ್ನು ಮತ್ತು ಅದರ ದಹನಬಲಿಯನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸಿದ್ದರು. ಆದರೆ ಈ ದುಃಖ ಘಟನೆಗಳು ನನಗೆ ಸಂಭವಿಸಿದೆ. ಹೀಗಿರುವಲ್ಲಿ ಇಂದು ನಾನು ಆ ಪಾಪ ಪರಿಹಾರದ ಬಲಿದ್ರವ್ಯವನ್ನು ಊಟಮಾಡಿದ್ದರೆ, ಯೆಹೋವ ದೇವರು ಸಂತೋಷಪಡುತ್ತಿದ್ದರೋ?” ಎಂದನು.</verse>
				<verse number="20">ಆಗ ಮೋಶೆಯು ಈ ಮಾತನ್ನು ಕೇಳಿದಾಗ ತೃಪ್ತಿಪಟ್ಟನು.</verse>
			</chapter>
			<chapter number="11">
				<verse number="1">ಯೆಹೋವ ದೇವರು ಮೋಶೆ ಆರೋನರಿಗೆ ಹೀಗೆ ಹೇಳಿದರು,</verse>
				<verse number="2">“ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳಬೇಕು: ‘ಭೂಮಿಯ ಮೇಲೆ ಇರುವ ಎಲ್ಲಾ ನೀವು ತಿನ್ನತಕ್ಕ ಪ್ರಾಣಿಗಳು ಯಾವವಂದರೆ:</verse>
				<verse number="3">ಪ್ರಾಣಿಗಳಲ್ಲಿ ಕಾಲ್ಗೊರಸು ಸೀಳಿದ ಮತ್ತು ಮೇವನ್ನು ಮೆಲುಕಾಡಿಸುವುದನ್ನೂ ನೀವು ತಿನ್ನಬಹುದು.</verse>
				<verse number="4">“ ‘ಯಾವ ಪ್ರಾಣಿ ಮೆಲುಕು ಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಒಂಟೆಯು ಮೇವನ್ನು ಮೆಲುಕಾಡಿಸುವುದಾದರೂ ಅದಕ್ಕೆ ಸೀಳುಗೊರಸು ಇಲ್ಲ. ಅದು ನಿಮಗೆ ಅಶುದ್ಧ.</verse>
				<verse number="5">ಬೆಟ್ಟದ ಕುಣಿ ಮೊಲವು ಮೇವನ್ನು ಮೆಲುಕುಹಾಕುವುದಾದರೂ, ಆದರೂ ಸೀಳುಗೊರಸು ಇಲ್ಲವಾದದ್ದರಿಂದ ಅದು ನಿಮಗೆ ಅಶುದ್ಧವಾಗಿರುವುದು.</verse>
				<verse number="6">ಮೊಲವು ಮೆಲುಕುಹಾಕುವುದಾದರೂ, ಆದರೂ ಸೀಳುಗೊರಸು ಇಲ್ಲವಾದದ್ದರಿಂದ ಅದು ನಿಮಗೆ ಅಶುದ್ಧವಾಗಿರುವುದು.</verse>
				<verse number="7">ಹಂದಿಯ ಗೊರಸು ಸೀಳಿದ್ದರೂ ಅದು ಮೇವನ್ನು ಮೆಲುಕು ಹಾಕುವುದಿಲ್ಲ, ಅದು ನಿಮಗೆ ಅಶುದ್ಧವಾಗಿರುವುದು.</verse>
				<verse number="8">ಅವುಗಳ ಮಾಂಸವನ್ನು ನೀವು ತಿನ್ನಬಾರದು. ಅವುಗಳ ಹೆಣವನ್ನು ಮುಟ್ಟಬಾರದು. ಅವು ನಿಮಗೆ ಅಶುದ್ಧವಾಗಿವೆ.</verse>
				<verse number="9">“ ‘ನೀರಿನಲ್ಲಿ ಬಾಳುವ ಎಲ್ಲವುಗಳಲ್ಲಿ ಅಂದರೆ ಸಮುದ್ರದಲ್ಲಿ ಮತ್ತು ನದಿಯಲ್ಲಿ ಇರುವ ಈಜು ರೆಕ್ಕೆಗಳುಳ್ಳ ಮತ್ತು ಪೊರೆ ಇರುವವುಗಳನ್ನು ತಿನ್ನಬಹುದು.</verse>
				<verse number="10">ಸಮುದ್ರಗಳಲ್ಲಿಯೂ, ನದಿಗಳಲ್ಲಿಯೂ ನೀರೊಳಗೆ ಚಲಿಸುವ ಮತ್ತು ಜೀವಿಸುವ ಎಲ್ಲವುಗಳಲ್ಲಿ ಈಜುರೆಕ್ಕೆ ಮತ್ತು ಪೊರೆಯಿಲ್ಲದವುಗಳು ನಿಮಗೆ ನಿಷಿದ್ಧವಾಗಿವೆ.</verse>
				<verse number="11">ಅವು ನಿಮಗೆ ಅಶುದ್ಧವಾಗಿಯೇ ಇರುವವು. ನೀವು ಅವುಗಳ ಮಾಂಸವನ್ನು ತಿನ್ನಬಾರದು ಮತ್ತು ಅವುಗಳ ಶವಗಳು ನಿಮಗೆ ಹೇಯವಾಗಿರಬೇಕು.</verse>
				<verse number="12">ನೀರಲ್ಲಿ ಯಾವುದಕ್ಕೆ ಈಜುರೆಕ್ಕೆ ಮತ್ತು ಪೊರೆಗಳಿಲ್ಲವೋ ಅವು ನಿಮಗೆ ಹೇಯವಾಗಿರಬೇಕು.</verse>
				<verse number="13">“ ‘ಪಕ್ಷಿಗಳಲ್ಲಿ ಇವುಗಳು ನಿಮಗೆ ನಿಷಿದ್ಧವಾಗಿವೆ. ಇವುಗಳು ನಿಮಗೆ ಅಸಹ್ಯಕರವಾದ ಮತ್ತು ತಿನ್ನಲು ನಿಷೇಧಿಸಲಾದ ಪಕ್ಷಿಗಳು ನೀವು ತಿನ್ನಬಾರದವುಗಳು ಯಾವುವೆಂದರೆ: ಗರುಡ, ರಣಹದ್ದು, ಕಪ್ಪು ರಣಹದ್ದು.</verse>
				<verse number="14">ಕ್ರೌಂಚ, ಅದರ ಜಾತಿಯ ಹದ್ದು,</verse>
				<verse number="15">ಅದರ ಜಾತಿಗನುಸಾರವಾದ ಪ್ರತಿಯೊಂದು ಕಾಗೆ,</verse>
				<verse number="16">ಉಷ್ಟ್ರಪಕ್ಷಿ, ಚೀರು ಗೂಬೆ, ಕಡಲ ಹಕ್ಕಿ ಮತ್ತು ಅದರ ಪ್ರತಿಯೊಂದು ಜಾತಿಯ ಗಿಡುಗ.</verse>
				<verse number="17">ಸಣ್ಣ ಗೂಬೆ, ನೀರುಕಾಗೆ, ದೊಡ್ಡ ಗೂಬೆ,</verse>
				<verse number="18">ಬಿಳಿಗೂಬೆ, ಮರಳುಗಾಡು ಗೂಬೆ, ರಣಹದ್ದು,</verse>
				<verse number="19">ನೀರು ಕೋಳಿ, ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ ಮತ್ತು ಬಾವಲಿ.</verse>
				<verse number="20">“ ‘ನಾಲ್ಕು ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳು ನಿಮಗೆ ಹೇಯವಾಗಿರಬೇಕು.</verse>
				<verse number="21">ಆದರೂ ಹಾರಾಡುವ, ಹರಿದಾಡುವ ನಾಲ್ಕು ಕಾಲುಗಳ ಮೇಲೆ ಹೋಗುವ, ತಮ್ಮ ಪಾದಗಳ ಮೇಲೆ ಕಾಲುಗಳಿದ್ದು, ಭೂಮಿಯ ಮೇಲೆ ದುಮುಕುವವುಗಳನ್ನೂ ನೀವು ತಿನ್ನಬಹುದು.</verse>
				<verse number="22">ಮಿಡತೆಗಳನ್ನು ಜುಟ್ಟೆ ಮಿಡತೆಗಳನ್ನು ಅವುಗಳ ಜಾತಿಗನುಸಾರವಾಗಿ ತಿನ್ನಬಹುದು.</verse>
				<verse number="23">ಆದರೆ ನಾಲ್ಕು ಪಾದವಿರುವ ಎಲ್ಲಾ ಹಾರಾಡುವ, ಹರಿದಾಡುವ ಬೇರೆಯವುಗಳು ನಿಮಗೆ ಹೇಯವಾಗಿರಬೇಕು.</verse>
				<verse number="24">“ ‘ಇವುಗಳಿಂದ ನೀವು ಅಶುದ್ಧರಾಗುವಿರಿ. ಅಂದರೆ ಅವುಗಳ ಶವಗಳನ್ನು ಮುಟ್ಟುವವರು ಸಂಜೆಯವರೆಗೂ ಅಶುದ್ಧರಾಗಿರುವರು.</verse>
				<verse number="25">ಯಾರಾದರೂ ಅವುಗಳ ಶವವನ್ನು ಹೊತ್ತರೂ, ಅವರು ಬಟ್ಟೆಗಳನ್ನು ಒಗೆದುಕೊಂಡು ಸಂಜೆಯವರೆಗೂ ಅಶುದ್ಧರಾಗಿರುವರು.</verse>
				<verse number="26">“ ‘ಯಾವ ಪ್ರಾಣಿಯ ಗೊರಸು ಸ್ವಲ್ಪ ಸೀಳಿದ್ದರೂ, ಇಗ್ಗೊರಸಾಗಿಲ್ಲವೋ ಮತ್ತು ಮೆಲುಕು ಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಅವುಗಳ ಶವವನ್ನು ಮುಟ್ಟುವವರು ಅಶುದ್ಧರಾಗಿರುವರು.</verse>
				<verse number="27">ನಾಲ್ಕು ಕಾಲುಗಳ ಮೇಲೆ ಹೋಗುವ ಎಲ್ಲಾ ಬಗೆಯ ಮೃಗಗಳಲ್ಲಿ ಅಂಗಾಲಿನ ಮೇಲೆ ಹೋಗುವುದೆಲ್ಲವೂ ನಿಮಗೆ ಅಶುದ್ಧವಾಗಿರುವುವು. ಯಾರಾದರೂ ಅವುಗಳ ಶವವನ್ನು ಮುಟ್ಟಿದರೆ ಅವರು ಸಂಜೆಯವರೆಗೂ ಅಶುದ್ಧರಾಗಿರುವರು.</verse>
				<verse number="28">ಅವುಗಳ ಶವವನ್ನು ಹೊರುವವರು ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೂ ಅಶುದ್ಧರಾಗಿರುವರು. ಈ ಪ್ರಾಣಿಗಳು ನಿಮಗೆ ಅಶುದ್ಧವಾದವುಗಳು.</verse>
				<verse number="29">“ ‘ಭೂಮಿಯ ಮೇಲೆ ಹರಿದಾಡುವವುಗಳಲ್ಲಿ ಇವು ಸಹ ನಿಮಗೆ ಅಶುದ್ಧವಾಗಿರಬೇಕು: ಮುಂಗುಲಿ, ಇಲಿ, ಸಕಲವಿಧವಾದ ಉಡ,</verse>
				<verse number="30">ಅರೆ ಪಳಗಿಸಿದ ಪ್ರಾಣಿ, ಹಾವುರಾಣಿ, ಊಸುರುವಳ್ಳಿ, ಹಲ್ಲಿ, ಬಸವನ ಹುಳು ಮತ್ತು ಚಿಟ್ಟಿಲಿ.</verse>
				<verse number="31">ನೆಲದ ಮೇಲೆ ಹರಿದಾಡುವ ಇವು ನಿಮಗೆ ಅಶುದ್ಧ. ಸತ್ತಿರುವಾಗ ಅವುಗಳನ್ನು ಯಾರಾದರೂ ಮುಟ್ಟಿದರೆ ಅವರು ಸಂಜೆಯವರೆಗೂ ಅಶುದ್ಧರಾಗಿರುವರು.</verse>
				<verse number="32">ಅವು ಸತ್ತು ಹೋಗಿ, ಯಾವುದರ ಮೇಲೆ ಬೀಳುವವೋ ಅವೆಲ್ಲಾ ಅಶುದ್ಧವಾಗಿರುವುದು. ಅದು ಮರದ ಪಾತ್ರೆಯೇ ಆಗಿರಲಿ, ಉಡುಪೇ ಆಗಿರಲಿ, ಚೀಲವೇ ಆಗಿರಲಿ, ಕೆಲಸ ಮಾಡುವ ಯಾವ ವಸ್ತುವಾಗಲಿ, ಅದು ಏನೇ ಆಗಿರಲಿ ಸಂಜೆಯವರೆಗೆ ನೀರಲ್ಲಿ ಇಡುವವರೆಗೆ ಅಶುದ್ಧವಾಗಿರುವುದು. ನಂತರ ಅದು ಶುದ್ಧವಾಗುವುದು.</verse>
				<verse number="33">ಪ್ರತಿಯೊಂದು ಮಣ್ಣಿನ ಪಾತ್ರೆಯಲ್ಲಿ ಅವುಗಳಲ್ಲಿ ಯಾವುದಾದರೂ ಬಿದ್ದರೆ, ಅದರಲ್ಲಿ ಏನಿದ್ದರೂ ಅಶುದ್ಧವಾಗುವುದು ಮತ್ತು ನೀವು ಅದನ್ನು ಒಡೆದುಹಾಕಬೇಕು.</verse>
				<verse number="34">ಅದರಲ್ಲಿರುವ ಆಹಾರ ಪದಾರ್ಥವೆಲ್ಲಾ ನೀರಿನಿಂದ ನೆನೆದಿದ್ದರೆ ಅದು ಅಶುದ್ಧವಾಗಿರುವುದು. ಅಂಥ ಪ್ರತಿ ಪಾತ್ರೆಯಲ್ಲಿ ಕುಡಿಯುವ ಎಲ್ಲಾ ಪಾನವೂ ಅಶುದ್ಧವಾಗಿರುವುದು.</verse>
				<verse number="35">ಅವುಗಳ ಹೆಣ ಯಾವ ಸಾಮಾನಿನ ಮೇಲೆ ಬಿದ್ದರೂ ಅದು ಅಶುದ್ಧವಾಗಿರುವುದು. ಅದು ಹರಿವಾಣವಾಗಿದ್ದರೂ, ಮಣ್ಣುಗಳ ಒಲೆಯಾಗಿದ್ದರೂ ಅದನ್ನು ಒಡೆದುಹಾಕಬೇಕು. ಏಕೆಂದರೆ ಅವು ಅಶುದ್ಧವಾಗಿವೆ. ಅವು ನಿಮಗೆ ಅಶುದ್ಧವೇ.</verse>
				<verse number="36">ನೀರು ಹೆಚ್ಚಾಗಿರುವ ಬುಗ್ಗೆಯಾಗಲಿ, ಹಳ್ಳವಾಗಲಿ ಶುದ್ಧವಾಗಿರುವುದು. ಅವುಗಳೊಳಗಿಂದ ಹೆಣಗಳನ್ನು ಎತ್ತಿದವರು ಅಶುದ್ಧರಾಗುವರು.</verse>
				<verse number="37">ಯಾವ ಭಾಗವಾದರೂ ಬಿತ್ತುವ ಬೀಜದಲ್ಲಿ ಬಿದ್ದರೂ ಶುದ್ಧವಾಗಿರುವುದು.</verse>
				<verse number="38">ಆದರೆ ನೀರು ಹಾಕಿ ನೆನಸಿದ ಬೀಜದ ಮೇಲೆ ಆ ಹೆಣವು ಬಿದ್ದರೆ, ಅದು ನಿಮಗೆ ಅಶುದ್ಧವಾಗಿರುವುದು.</verse>
				<verse number="39">“ ‘ನೀವು ತಿನ್ನುವ ಯಾವುದಾದರೂ ಪ್ರಾಣಿ ಸತ್ತಿದ್ದರೆ, ಅದರ ಶವವನ್ನು ಮುಟ್ಟಿದವರು ಸಂಜೆಯವರೆಗೆ ಅಶುದ್ಧರಾಗಿರುವರು.</verse>
				<verse number="40">ಯಾರಾದರೂ ಅದರ ಮಾಂಸವನ್ನು ತಿಂದಲ್ಲಿ ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು. ಅದರ ಶವವನ್ನು ಹೊರುವವರೂ ತಮ್ಮ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು.</verse>
				<verse number="41">“ ‘ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದು ಕ್ರಿಮಿಯೂ ಹೇಯವಾಗಿದೆ. ಅದನ್ನು ತಿನ್ನಬಾರದು.</verse>
				<verse number="42">ಹೊಟ್ಟೆಯಿಂದ ಹರಿದಾಡುವ ಯಾವುದನ್ನೂ, ನಾಲ್ಕು ಕಾಲಿನ ಮೇಲೆ ನಡೆದಾಡುವ ಯಾವುದನ್ನೂ, ಇಲ್ಲವೆ ಭೂಮಿಯ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳಲ್ಲಿ ಬಹಳ ಕಾಲುಗಳಿದ್ದ ಯಾವುದನ್ನು ನೀವು ತಿನ್ನಬಾರದು. ಏಕೆಂದರೆ ಅವು ಹೇಯವಾಗಿವೆ.</verse>
				<verse number="43">ಯಾವುದೇ ಹರಿದಾಡುವ ಪ್ರಾಣಿಯೊಡನೆಯೂ ನೀವು ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬಾರದು, ನೀವು ಅವುಗಳೊಂದಿಗೆ ನಿಮ್ಮನ್ನು ಅಶುದ್ಧಪಡಿಸಿಕೊಂಡು ಅವುಗಳಿಂದ ಮಲಿನರಾಗಬಾರದು.</verse>
				<verse number="44">ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಾನೇ. ನೀವು ನಿಮ್ಮನ್ನು ಪ್ರತಿಷ್ಠಿಸಿಕೊಳ್ಳಿರಿ. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ಇದಲ್ಲದೆ ಭೂಮಿಯ ಮೇಲೆ ಹರಿದಾಡುವ ಯಾವ ಬಗೆಯ ಜಂತುಗಳಿಂದಲೂ ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.</verse>
				<verse number="45">ಏಕೆಂದರೆ ನಿಮ್ಮ ದೇವರಾಗಿರುವುದಕ್ಕೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರಗೆ ಕರೆತಂದ ಯೆಹೋವ ದೇವರು ನಾನೇ. ನಾನು ಪರಿಶುದ್ಧನಾಗಿರುವುದರಿಂದ ನೀವು ಪರಿಶುದ್ಧರಾಗಿರಬೇಕು.</verse>
				<verse number="46">“ ‘ಪ್ರಾಣಿಗಳು, ಪಕ್ಷಿಗಳು, ನೀರಿನಲ್ಲಿರುವ ಮತ್ತು ನೆಲದ ಮೇಲೆ ತೆವಳುವ ಪ್ರತಿಯೊಂದು ಜೀವಿಗಳಿಗೆ ಕುರಿತಾದ ನಿಯಮವು ಇದೇ.</verse>
				<verse number="47">ಅಶುದ್ಧ ಮತ್ತು ಶುದ್ಧಗಳ ನಡುವಿನ ವ್ಯತ್ಯಾಸವನ್ನೂ ಮತ್ತು ತಿನ್ನಲರ್ಹವಾದ ಮೃಗ ಮತ್ತು ತಿನ್ನಬಾರದ ಮೃಗಗಳ ನಡುವಿನ ವ್ಯತ್ಯಾಸವನ್ನು ಹೀಗೆ ತಿಳಿದುಕೊಳ್ಳುವಿರಿ.’ ”</verse>
			</chapter>
			<chapter number="12">
				<verse number="1">ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ, ಹೇಳಿದ್ದೇನೆಂದರೆ,</verse>
				<verse number="2">“ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳು: ‘ಒಬ್ಬ ಸ್ತ್ರೀಯು ಗರ್ಭಧರಿಸಿ, ಗಂಡು ಮಗುವನ್ನು ಹೆತ್ತರೆ, ಅವಳು ಏಳು ದಿನಗಳು ಅಶುದ್ಧಳಾಗಿರಬೇಕು. ತನ್ನ ಮುಟ್ಟಿಗಾಗಿ ಪ್ರತ್ಯೇಕಿಸಿದ ದಿನಗಳ ಪ್ರಕಾರ ಅವಳು ಅಶುದ್ಧಳಾಗಿರಬೇಕು.</verse>
				<verse number="3">ಎಂಟನೆಯ ದಿನದಲ್ಲಿ ಮಗುವಿಗೆ ಸುನ್ನತಿ ಮಾಡಿಸಬೇಕು.</verse>
				<verse number="4">ಅವಳು ಮೂವತ್ತಮೂರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಯಬೇಕು. ಅವಳ ಶುದ್ಧೀಕರಣದ ದಿನಗಳು ಪೂರೈಸುವ ತನಕ ಅವಳು ಪರಿಶುದ್ಧವಾದದ್ದನ್ನು ಮುಟ್ಟಬಾರದು, ಇಲ್ಲವೆ ಪರಿಶುದ್ಧ ಸ್ಥಳಕ್ಕೆ ಬರಬಾರದು.</verse>
				<verse number="5">ಅವಳು ಹೆಣ್ಣು ಮಗುವನ್ನು ಹೆತ್ತರೆ, ಅವಳು ಮುಟ್ಟಿನಲ್ಲಿರುವಂತೆ ಎರಡು ವಾರಗಳು ಅಶುದ್ಧಳಾಗಿರಬೇಕು. ಅವಳು ಅರವತ್ತಾರು ದಿನಗಳು ಶುದ್ಧೀಕರಣದಲ್ಲಿ ಮುಂದುವರಿಯಬೇಕು.</verse>
				<verse number="6">“ ‘ಮಗನಿಗಾಗಿ ಇಲ್ಲವೆ ಮಗಳಿಗಾಗಿ ಅವಳ ಶುದ್ಧ ದಿನಗಳು ಪೂರ್ತಿಯಾದರೆ, ಅವಳು ದಹನಬಲಿಗಾಗಿ ಒಂದು ವರ್ಷದ ಕುರಿಮರಿಯನ್ನೂ, ಪಾಪ ಪರಿಹಾರದ ಬಲಿಗಾಗಿ ಪಾರಿವಾಳದ ಮರಿಯನ್ನೂ, ಇಲ್ಲವೆ ಬೆಳವಕ್ಕಿಯನ್ನೂ ದೇವದರ್ಶನದ ಗುಡಾರದ ಬಾಗಿಲಲ್ಲಿ ಯಾಜಕನ ಬಳಿಗೆ ತರಬೇಕು.</verse>
				<verse number="7">ಅವನು ಯೆಹೋವ ದೇವರ ಮುಂದೆ ಅದನ್ನು ಅರ್ಪಿಸಿ, ಅವಳಿಗಾಗಿ ಪ್ರಾಯಶ್ಚಿತ್ತ ಮಾಡುವನು. ಆಗ ಅವಳು ತನ್ನ ರಕ್ತಸ್ರಾವದಿಂದಾದ ಅಶುದ್ಧತೆಯಿಂದ ಶುದ್ಧಳಾಗುವಳು. “ ‘ಗಂಡು ಮಗುವನ್ನಾಗಲಿ, ಹೆಣ್ಣು ಮಗುವನ್ನಾಗಲಿ ಹೆತ್ತವಳಿಗೆ ನಿಯಮವು ಇದೆ.</verse>
				<verse number="8">ಅವಳು ಕುರಿಮರಿಯನ್ನು ತರಲು ಅಶಕ್ತಳಾಗಿದ್ದರೆ, ಅವಳು ದಹನಬಲಿಗಾಗಿ ಒಂದು ಪಾಪ ಪರಿಹಾರದ ಬಲಿಗಾಗಿ, ಇನ್ನೊಂದು ಎಂಬಂತೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು ಮತ್ತು ಯಾಜಕನು ಅವಳಿಗಾಗಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವಳು ಶುದ್ಧಳಾಗುವಳು.’ ”</verse>
			</chapter>
			<chapter number="13">
				<verse number="1">ಯೆಹೋವ ದೇವರು ಮೋಶೆ ಮತ್ತು ಆರೋನರೊಡನೆ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="2">“ಒಬ್ಬ ಮನುಷ್ಯನು ತನ್ನ ಚರ್ಮದ ಮೇಲೆ ಬಾವಾಗಲಿ, ಕಜ್ಜಿಯಾಗಲಿ, ಹೊಳಪಿನ ಮಚ್ಚೆಯಾಗಲಿ ಮತ್ತು ಅವನ ಚರ್ಮದಲ್ಲಿ ಕುಷ್ಠದ ವ್ಯಾಧಿಯಂತಿದ್ದರೆ, ಅವನು ಯಾಜಕನಾದ ಆರೋನನ ಬಳಿಗಾದರೂ ಇಲ್ಲವೆ ಯಾಜಕರಾದ ಅವನ ಪುತ್ರರಲ್ಲಿ ಒಬ್ಬನ ಬಳಿಗಾದರೂ ಕರೆದುಕೊಂಡು ಬರಬೇಕು.</verse>
				<verse number="3">ಯಾಜಕನು ಚರ್ಮದ ಮೇಲಿರುವ ವ್ಯಾಧಿಯನ್ನು ಪರೀಕ್ಷಿಸಬೇಕು. ವ್ಯಾಧಿಯಲ್ಲಿನ ಕೂದಲು ಬೆಳ್ಳಗಾದರೆ, ಆ ವ್ಯಾಧಿಯು ಅವನ ಚರ್ಮಕ್ಕಿಂತಲೂ ಆಳವಾಗಿ ಕಂಡರೆ, ಅದು ಚರ್ಮರೋಗವಾಗಿರುವುದು. ಆಗ ಯಾಜಕನು ಅವನನ್ನು ನೋಡಿ ಅಶುದ್ಧನೆಂದು ನಿರ್ಣಯಿಸಬೇಕು.</verse>
				<verse number="4">ಅವನ ಚರ್ಮದಲ್ಲಿ ಬಿಳುಪಾದ ಮಚ್ಚೆಯಿದ್ದು, ಅದು ನೋಡುವುದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದು, ಅಲ್ಲಿನ ಕೂದಲು ಬೆಳ್ಳಗಾಗದಿದ್ದರೆ ಯಾಜಕನು ಆ ವ್ಯಾಧಿಯವನನ್ನು ಏಳು ದಿನ ಪ್ರತ್ಯೇಕವಾಗಿ ಇರಿಸಬೇಕು.</verse>
				<verse number="5">ಯಾಜಕನು ಏಳನೆಯ ದಿನದಲ್ಲಿ ಅವನನ್ನು ಪರೀಕ್ಷಿಸಿದಾಗ, ಆ ವ್ಯಾಧಿ ನಿಂತ ಹಾಗೆ ಕಾಣಿಸಿದರೆ, ಆ ವ್ಯಾಧಿ ಚರ್ಮದಲ್ಲಿ ಹರಡಿರದಿದ್ದರೆ, ಯಾಜಕನು ಅವನನ್ನು ಇನ್ನೂ ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.</verse>
				<verse number="6">ಯಾಜಕನು ಅವನನ್ನು ಏಳನೆಯ ದಿನದಲ್ಲಿ ಪರೀಕ್ಷಿಸಬೇಕು. ಆಗ ವ್ಯಾಧಿಯು ಸ್ವಲ್ಪ ಕಪ್ಪಾಗಿದ್ದು, ಚರ್ಮದಲ್ಲೆಲ್ಲಾ ಹರಡಿರದಿದ್ದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅದು ಬರೀ ಕಜ್ಜಿಯಾದ ಕಾರಣ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗಿರುವನು.</verse>
				<verse number="7">ಅವನು ತನ್ನ ಶುದ್ಧಿಗಾಗಿ ಯಾಜಕನಿಗೆ ತೋರಿಸಿಕೊಂಡ ಮೇಲೆ ಕಜ್ಜಿಯು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹಬ್ಬಿದರೆ, ಅವನು ತಿರುಗಿ ಯಾಜಕನಿಗೆ ತೋರಿಸಿಕೊಳ್ಳಬೇಕು.</verse>
				<verse number="8">ಯಾಜಕನು ಅದನ್ನು ಪರೀಕ್ಷಿಸಿದಾಗ, ಕಜ್ಜಿಯ ಚರ್ಮವೇ ಹರಡಿರುವುದಾದರೆ ಆಗ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಏಕೆಂದರೆ ಅದು ಚರ್ಮರೋಗವಾಗಿರುವುದು.</verse>
				<verse number="9">“ಚರ್ಮರೋಗವು ಮನುಷ್ಯನಲ್ಲಿ ಇರುವುದಾದರೆ, ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು.</verse>
				<verse number="10">ಆಗ ಯಾಜಕನು ಅವನನ್ನು ಪರೀಕ್ಷಿಸಬೇಕು, ಆ ಬಾವು ಚರ್ಮದಲ್ಲಿ ಬೆಳ್ಳಗಿದ್ದು, ಅದರ ಕೂದಲು ಬೆಳ್ಳಗಾಗಿ ಹೋಗಿದ್ದರೆ ಮತ್ತು ಆ ಬಾವಿನಲ್ಲಿ ಹಸಿ ಮಾಂಸವು ಇದ್ದರೆ,</verse>
				<verse number="11">ಅದು ಅವನ ಚರ್ಮದಲ್ಲಿ ದೀರ್ಘಕಾಲದ ಚರ್ಮರೋಗವಾಗಿರುವುದು. ಆಗ ಯಾಜಕನು ಅವನು ಅಶುದ್ಧನೆಂದು ನುಡಿಯಬೇಕು ಮತ್ತು ಅವನನ್ನು ಪ್ರತ್ಯೇಕವಾಗಿ ಇರಿಸದೆ ಆಗಲೇ ಅಶುದ್ಧನೆಂದು ನಿರ್ಣಯಿಸಬೇಕು.</verse>
				<verse number="12">“ಒಬ್ಬನಲ್ಲಿ ಸಾಂಕ್ರಾಮಿಕ ಚರ್ಮರೋಗ ಹತ್ತಿದರೆ ಮತ್ತು ಚರ್ಮವನ್ನೆಲ್ಲಾ ಹರಡಿಕೊಂಡು ತಲೆಯಿಂದ ಪಾದದವರೆಗೂ ಹರಡಿವುದುನ್ನು ಯಾಜಕನು ಪರೀಕ್ಷಿಸಿದರೆ,</verse>
				<verse number="13">ಆಗ ಯಾಜಕನು ಅದನ್ನು ಗಮನಿಸಬೇಕು. ತೊನ್ನು ಹತ್ತಿದರೆ, ಅವನ ಮೈಯೆಲ್ಲವನ್ನು ಹರಡಿಕೊಂಡಿದ್ದರೆ, ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ನುಡಿಯಬೇಕು. ಅದು ಪೂರ್ತಿ ಬೆಳ್ಳಗಾಗಿರುವುದರಿಂದ ಅವನು ಶುದ್ಧನಾಗಿರುವನು.</verse>
				<verse number="14">ಆದರೆ ಹಸಿ ಮಾಂಸವು ಅವನಲ್ಲಿ ಕಾಣಿಸಿಕೊಂಡರೆ ಅವನು ಅಶುದ್ಧನಾಗಿರುವನು.</verse>
				<verse number="15">ಯಾಜಕನು ಹಸಿ ಮಾಂಸವನ್ನು ಪರೀಕ್ಷಿಸಿ ಅವನು ಅಶುದ್ಧನೆಂದು ನುಡಿಯಬೇಕು. ಏಕೆಂದರೆ ಹಸಿ ಮಾಂಸವು ಅಶುದ್ಧವಾದದ್ದು, ಅದು ಅಶುದ್ಧಗೊಳಿಸುವ ಚರ್ಮರೋಗವೇ.</verse>
				<verse number="16">ಹಸಿ ಮಾಂಸವು ಮತ್ತೆ ಬದಲಾಗಿ ಬೆಳ್ಳಗಾದರೆ, ಅವನು ಯಾಜಕನ ಬಳಿಗೆ ಬರಬೇಕು.</verse>
				<verse number="17">ಆಗ ಯಾಜಕನು ಅವನನ್ನು ಪರೀಕ್ಷಿಸಿ, ಆ ವ್ಯಾಧಿಯು ಬೆಳ್ಳಗಾಗಿದ್ದರೆ, ಯಾಜಕನು, ಅವನು ವ್ಯಾಧಿಯಿಂದ ಶುದ್ಧನಾಗಿರುವನೆಂದು ನುಡಿಯಬೇಕು. ಅವನು ಶುದ್ಧನಾಗಿರುವನು.</verse>
				<verse number="18">“ಆ ದೇಹದ ಚರ್ಮದಲ್ಲಿ ಹುಣ್ಣು ಉಂಟಾಗಿ ವಾಸಿಯಾದರೂ</verse>
				<verse number="19">ಆ ಹುಣ್ಣಿನ ಜಾಗದಲ್ಲಿ ಬಿಳಿಯ ಊತವಾಗಲಿ ಇಲ್ಲವೆ ಬಿಳುಪಾದ ಮಚ್ಚೆಯಾಗಲಿ, ಕೆಂಪು ಮಿಶ್ರಿತ ಕಲೆ ಉಂಟಾದರೆ ಅದನ್ನು ಯಾಜಕನಿಗೆ ತೋರಿಸಬೇಕು.</verse>
				<verse number="20">ಯಾಜಕನು ಅದನ್ನು ಪರೀಕ್ಷಿಸಿದಾಗ, ಅದು ಚರ್ಮದಿಂದ ಕೆಳಗೆ ಕಂಡರೆ ಮತ್ತು ಅಲ್ಲಿಯ ಕೂದಲು ಬೆಳ್ಳಗಾಗಿದ್ದರೆ, ಯಾಜಕನು ಅವನನ್ನು ಅಶುದ್ಧನೆಂದು ನುಡಿಯಬೇಕು. ಅದು ಹುಣ್ಣಿನಿಂದ ಒಡೆದುಹೋದ ಚರ್ಮರೋಗವಾಗಿರುವುದು.</verse>
				<verse number="21">ಆದರೆ ಯಾಜಕನು ಅದನ್ನು ಪರೀಕ್ಷಿಸಲು, ಅದರಲ್ಲಿ ಬಿಳಿಯ ಕೂದಲು ಇರದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ತಗ್ಗಾಗದಿದ್ದರೆ ಮತ್ತು ಸ್ವಲ್ಪ ಮಬ್ಬಾಗಿದ್ದರೆ, ಆಗ ಯಾಜಕನು ಅವನನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.</verse>
				<verse number="22">ಅದು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹರಡಿದ್ದರೆ, ಯಾಜಕನು ಅವನು ಅಶುದ್ಧನೆಂದು ನುಡಿಯಬೇಕು. ಅದು ಚರ್ಮರೋಗವಾಗಿದೆ.</verse>
				<verse number="23">ಆದರೆ ಆ ಹೊಳಪಾದ ಕಲೆಯು ಹರಡದೆ ಅದೇ ಸ್ಥಳದಲ್ಲಿ ಇದ್ದು, ಅದು ಉರಿಯುವ ಹುಣ್ಣಾಗಿದ್ದರೂ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.</verse>
				<verse number="24">“ಅವನ ದೇಹದ ಚರ್ಮದಲ್ಲಿ ಬೆಂಕಿಯ ಬೊಬ್ಬೆಯು ಉಂಟಾಗಿ ಆ ಬೊಬ್ಬೆಯ ಸಹ ಮಾಂಸವು ಬಿಳುಪಾದ ಇಲ್ಲವೆ ಸ್ವಲ್ಪ ಕೆಂಪಗೆ, ಬಿಳಿಯ ಹೊಳಪಾದ ಕಲೆಯಾಗಿದ್ದರೆ,</verse>
				<verse number="25">ಯಾಜಕನು ಅದನ್ನು ಪರೀಕ್ಷಿಸಬೇಕು. ಆ ಹೊಳಪಾದ ಕಲೆಯ ಮೇಲೆ ಕೂದಲು ಬಿಳುಪಾಗಿ ತಿರುಗಿದ್ದರೆ ಮತ್ತು ಅದು ನೋಡುವುದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ, ಅದು ಬೊಬ್ಬೆಯಿಂದ ಒಡೆದ ಚರ್ಮರೋಗವಾಗಿರುವುದು. ಆದಕಾರಣ ಅವನು ಅಶುದ್ಧನೆಂದು ಯಾಜಕನು ನುಡಿಯಬೇಕು. ಅದು ಚರ್ಮವ್ಯಾಧಿಯಾಗಿದೆ.</verse>
				<verse number="26">ಆದರೆ ಯಾಜಕನು ಅದನ್ನು ಪರೀಕ್ಷಿಸಿದಾಗ, ಆ ಹೊಳಪಾದ ಮಚ್ಚೆಯ ಮೇಲೆ ಕೂದಲು ಬೆಳ್ಳಗಾಗದಿದ್ದರೆ ಮತ್ತು ಅದು ಚರ್ಮಕ್ಕಿಂತಲೂ ಆಳವಾಗಿರದೆ ಸ್ವಲ್ಪ ಮೋಟಾಗಿದ್ದರೆ, ಯಾಜಕನು ಆಗ ಅವನನ್ನು ಏಳು ದಿನಗಳ ಕಾಲ ಮುಚ್ಚಿಡಬೇಕು.</verse>
				<verse number="27">ಯಾಜಕನು ಅವನನ್ನು ಏಳನೆಯ ದಿನದಲ್ಲಿ ಪರೀಕ್ಷಿಸಬೇಕು. ಆಗ ಅದು ಚರ್ಮದ ಹೊರಗೆಲ್ಲಾ ಹೆಚ್ಚಾಗಿ ಹರಡಿದ್ದರೆ, ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು. ಅದು ಚರ್ಮರೋಗ.</verse>
				<verse number="28">ಆ ಹೊಳಪಾದ ಕಲೆಯು ಅದೇ ಸ್ಥಳದಲ್ಲಿ ಉಳಿದಿದ್ದರೆ ಮತ್ತು ಚರ್ಮದಲ್ಲಿ ಹರಡದೆ ಸ್ವಲ್ಪ ಮಬ್ಬಾಗಿದ್ದರೆ, ಬೆಂಕಿ ಸುಟ್ಟ ಬೊಬ್ಬೆಯ ಊತವೆಂದು ಮತ್ತು ಅವನು ಶುದ್ಧನೆಂದು ಯಾಜಕನು ನುಡಿಯಬೇಕು. ಏಕೆಂದರೆ ಅದು ಬೆಂಕಿಯ ಬೊಬ್ಬೆಯಾಗಿರುವುದು.</verse>
				<verse number="29">“ಒಬ್ಬ ಪುರುಷನಿಗಾಗಲಿ ಇಲ್ಲವೆ ಸ್ತ್ರೀಗಾಗಲಿ ವ್ಯಾಧಿಯು ತಲೆಯ ಮೇಲಾಗಲಿ, ಗಡ್ಡದ ಮೇಲಾಗಲಿ ಕಲೆ ಇದ್ದರೆ,</verse>
				<verse number="30">ಆಗ ಯಾಜಕನು ಆ ವ್ಯಾಧಿಯನ್ನು ಪರೀಕ್ಷಿಸಬೇಕು. ಅದು ನೋಡುವುದಕ್ಕೆ ಚರ್ಮಕ್ಕಿಂತಲೂ ಆಳವಾಗಿದ್ದರೆ ಮತ್ತು ಅದರಲ್ಲಿ ಹಳದಿಯ ತೆಳ್ಳನೆಯ ಕೂದಲಿದ್ದರೆ, ಯಾಜಕನು ಆಗ ಅವನು ಅಶುದ್ಧನೆಂದು ಹೇಳಬೇಕು. ಅದು ತಲೆಯ ಮೇಲಾಗಲಿ ಇಲ್ಲವೆ ಗಡ್ಡದ ಮೇಲಾಗಲಿ ಇರುವ ಚರ್ಮರೋಗವಾಗಿದೆ.</verse>
				<verse number="31">ಯಾಜಕನು ಆ ಇಸಬಿನ ವ್ಯಾಧಿಯನ್ನು ನೋಡಿದಾಗ, ಅದು ಉಳಿದ ಚರ್ಮಕ್ಕಿಂತಲೂ ಆಳವಾಗಿರದಿದ್ದರೆ ಮತ್ತು ಕಪ್ಪುಕೂದಲು ಇರದಿದ್ದರೆ, ಯಾಜಕನು ಆಗ ಆ ಇಸಬಿನ ವ್ಯಾಧಿಯವನನ್ನು ಏಳು ದಿನಗಳ ಕಾಲ ಪ್ರತ್ಯೇಕವಾಗಿ ಇರಿಸಬೇಕು.</verse>
				<verse number="32">ಏಳನೆಯ ದಿನದಲ್ಲಿ ಯಾಜಕನು ಆ ವ್ಯಾಧಿಯನ್ನು ಪರೀಕ್ಷಿಸಿದಾಗ, ಆ ಇಸಬು ಹರಡದೆ ಮತ್ತು ಅದರಲ್ಲಿ ಹಳದಿ ಕೂದಲು ಇರದೆ, ಆ ಇಸಬು ಮಿಕ್ಕ ಚರ್ಮಕ್ಕಿಂತಲೂ ಆಳವಾಗಿ ಕಾಣದಿದ್ದರೆ,</verse>
				<verse number="33">ಅವನು ಕ್ಷೌರ ಮಾಡಿಸಿಕೊಳ್ಳಲಿ. ಆದರೆ ಅವನು ಇಸಬನ್ನು ಕ್ಷೌರ ಮಾಡಬಾರದು. ಯಾಜಕನು ಆ ಇಸಬಿನವನನ್ನು ಏಳು ದಿನ ಹೆಚ್ಚಾಗಿ ಪ್ರತ್ಯೇಕವಾಗಿ ಇರಿಸಬೇಕು.</verse>
				<verse number="34">ಏಳನೆಯ ದಿನದಲ್ಲಿ ಯಾಜಕನು ಆ ಇಸಬನ್ನು ನೋಡಬೇಕು. ಆ ಇಸಬು ಚರ್ಮದಲ್ಲಿ ಹರಡಿರದಿದ್ದರೆ ಇಲ್ಲವೆ ನೋಡಲು ಅದು ಮಿಕ್ಕ ಚರ್ಮಕ್ಕಿಂತಲೂ ತಗ್ಗಾಗಿರದಿದ್ದರೆ, ಯಾಜಕನು ಆಗ ಅವನನ್ನು ಶುದ್ಧನೆಂದು ನುಡಿಯಬೇಕು, ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗಿರಬೇಕು.</verse>
				<verse number="35">ಆದರೆ ಅವನು ಶುದ್ಧನಾದ ಮೇಲೆ ಆ ಇಸಬು ಚರ್ಮದಲ್ಲಿ ಹೆಚ್ಚಾಗಿ ಹರಡಿರದಿದ್ದರೆ,</verse>
				<verse number="36">ಯಾಜಕನು ಆಗ ಅವನನ್ನು ಪರೀಕ್ಷಿಸಬೇಕು, ಆ ಇಸಬು ಚರ್ಮದಲ್ಲಿ ಹರಡಿದ್ದರೆ, ಯಾಜಕನು ಹಳದಿ ಕೂದಲಿಗಾಗಿ ವಿಚಾರಿಸದಿರಲಿ. ಅವನು ಅಶುದ್ಧನು.</verse>
				<verse number="37">ಆದರೆ ಆ ಇಸಬು ಅವನಿಗೆ ನಿಂತ ಹಾಗೆ ಕಂಡರೆ ಮತ್ತು ಅದರಲ್ಲಿ ಕಪ್ಪುಕೂದಲು ಬೆಳೆದರೆ, ಇಸಬು ವಾಸಿಯಾಗಿ ಅವನು ಶುದ್ಧನಾಗುವನು, ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು.</verse>
				<verse number="38">“ಒಬ್ಬ ಪುರುಷನಿಗಾಗಲಿ ಇಲ್ಲವೆ ಸ್ತ್ರೀಗಾಗಲಿ ದೇಹದ ಚರ್ಮದಲ್ಲಿ ಬಿಳಿಯ ಹೊಳಪಾದ ಮಚ್ಚೆಗಳು ಅಲ್ಲಲ್ಲಿ ಇದ್ದರೆ,</verse>
				<verse number="39">ಅವುಗಳನ್ನು ಯಾಜಕನು ಪರೀಕ್ಷಿಸಬೇಕು, ಅವರ ದೇಹದ ಚರ್ಮದಲ್ಲಿ ಹೊಳಪಾದ ಕಲೆಗಳು ಮಬ್ಬಾಗಿ ಬಿಳುಪಾಗಿದ್ದರೆ, ಅದು ಚರ್ಮದ ಮೇಲೆ ಬಿಸಿಲಿನಿಂದಾದ ಕೆಂಪು ಮಚ್ಚೆಯಾಗಿರುವುದು. ಅವನು ಶುದ್ಧನಾಗಿರುವನು.</verse>
				<verse number="40">“ಒಬ್ಬ ಗಂಡಸಿನ ತಲೆಯ ಕೂದಲು ಉದುರಿ ಹೋದರೆ, ಅವನು ಬೋಳು ತಲೆಯವನು. ಆದರೂ ಅವನು ಶುದ್ಧನಾಗಿರುವನು.</verse>
				<verse number="41">ಮುಂದಲೆಯ ಭಾಗದಲ್ಲಿ ಕೂದಲು ಉದುರಿ ಹೋಗಿದ್ದರೆ, ಅವನು ಪಟ್ಟೆ ತಲೆಯವನು, ಆದರೂ ಅವನು ಶುದ್ಧನಾಗಿರುವನು.</verse>
				<verse number="42">ಆದರೆ ಆ ಬೋಳು ತಲೆಯಲ್ಲಿ ಇಲ್ಲವೆ ಪಟ್ಟೆ ತಲೆಯಲ್ಲಿ ಕೆಂಪಗಿರುವ ಬಿಳುಪಾದ ಮಚ್ಚೆಯಿದ್ದರೆ, ಅದು ಅವನ ಬೋಳು ತಲೆಯಲ್ಲಾಗಲಿ ಇಲ್ಲವೆ ಪಟ್ಟೆ ತಲೆಯಲ್ಲಾಗಲಿ ಹುಟ್ಟುತ್ತಿರುವ ಚರ್ಮರೋಗವೇ.</verse>
				<verse number="43">ಆಗ ಯಾಜಕನು ಅವನನ್ನು ಪರೀಕ್ಷಿಸಬೇಕು. ಅವನ ಬೋಳು ತಲೆಯಲ್ಲಾಗಲಿ, ಇಲ್ಲವೆ ಅವನ ಪಟ್ಟೆ ತಲೆಯಲ್ಲಾಗಲಿ ಏಳುತ್ತಿರುವ ಆ ಕಲೆಯು ಬಿಳುಪಾಗಿ ಕೆಂಪಾಗಿದ್ದರೆ ಮತ್ತು ಮಾಂಸದ ತೊಗಲಿನಲ್ಲಿ ಇರುವ ಚರ್ಮರೋಗದ ಹಾಗಿದ್ದರೆ, ಅವನು ರೋಗಿ ಎಂದೂ ಅಶುದ್ಧನೆಂದೂ</verse>
				<verse number="44">ಅವನ ವ್ಯಾಧಿಯು ಅವನ ತಲೆಯಲ್ಲಿ ಕಾಣಿಸಿದ್ದರಿಂದ ಅವನು ಖಂಡಿತವಾಗಿ ಅಶುದ್ಧನೆಂದೂ ಯಾಜಕನು ಹೇಳಬೇಕು.</verse>
				<verse number="45">“ಚರ್ಮರೋಗ ಇರುವ ಅವನು ತನ್ನ ಬಟ್ಟೆಗಳನ್ನು ಹರಿದುಕೊಂಡವನಾಗಿ, ತಲೆಗೂದಲನ್ನು ಕೆದರಿಕೊಂಡು, ಮುಖದ ಕೆಳಭಾಗವನ್ನು ಮುಚ್ಚಿಕೊಂಡು, ‘ನಾನು ಅಶುದ್ಧನು, ಅಶುದ್ಧನು,’ ಎಂದು ಕೂಗಬೇಕು.</verse>
				<verse number="46">ಆ ವ್ಯಾಧಿ ಅವನಲ್ಲಿ ಇರುವಷ್ಟು ದಿನಗಳೂ ಅವನು ಅಶುದ್ಧನಾಗಿರುವನು. ಅವನು ಪಾಳೆಯದ ಹೊರಗೆ ಒಂಟಿಯಾಗಿ ವಾಸಿಸಬೇಕು.</verse>
				<verse number="47">“ಬೂಜು ಚರ್ಮರೋಗದ ಗುರುತು ಅವನ ಉಡುಪಿನಲ್ಲೂ ಇದ್ದು, ಅದು ಉಣ್ಣೆಯ ಉಡುಪಾಗಲಿ ಇಲ್ಲವೆ ನಾರಿನ ಉಡುಪಾಗಲಿ,</verse>
				<verse number="48">ನಾರಿನ ಇಲ್ಲವೆ ಉಣ್ಣೆಯ ಹಾಸಿನಲ್ಲಾಗಲಿ, ಹೊಕ್ಕಿನಲ್ಲಾಗಲಿ, ಚರ್ಮದಲ್ಲಾಗಲಿ, ಚರ್ಮದಿಂದ ಮಾಡಿದ ಯಾವ ವಸ್ತುವಿನಲ್ಲಾಗಲಿ ಇದಲ್ಲದೆ ಹಸುರಾಗಿ ಇಲ್ಲವೆ,</verse>
				<verse number="49">ಆ ಬಟ್ಟೆ ತೊಗಲು ಹಾಸು ಇಲ್ಲವೆ ಚರ್ಮದಿಂದ ಮಾಡಿದ ಯಾವ ವಸ್ತುವಿನಲ್ಲಾಗಲಿ, ಹಸುರಾಗಿ ಇಲ್ಲವೆ ಕೆಂಪಾಗಿ ಇದ್ದರೆ ಅದು ಬೂಜಾಗಿದೆ. ಅದನ್ನು ಯಾಜಕನಿಗೆ ತೋರಿಸಬೇಕು.</verse>
				<verse number="50">ಯಾಜಕನು ಅದನ್ನು ಪರೀಕ್ಷಿಸಿ, ಆ ವಸ್ತುವನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.</verse>
				<verse number="51">ಅವನು ಏಳನೆಯ ದಿನದಲ್ಲಿ ಅದನ್ನು ಪರೀಕ್ಷಿಸಬೇಕು. ಆ ಬೂಜು ಅವನ ಉಣ್ಣೆ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ, ಹೆಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನ್ನಾಗಲಿ ಹರಡಿದ್ದರೆ ಅದು ನಾಶಕರವಾದ ಬೂಜುರೋಗವಾಗಿದೆ. ಅದು ಅಶುದ್ಧವು.</verse>
				<verse number="52">ಆದ್ದರಿಂದ ಅವನು ಆ ಉಡುಪುಗಳನ್ನು ಅಂದರೆ ಅದು ಉಣ್ಣೆ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ, ಹಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನ್ನಾಗಲಿ ಎಲ್ಲಿ ಬೂಜಿದೆಯೋ ಅದನ್ನು ಸುಡಬೇಕು. ಏಕೆಂದರೆ ಅದು ನಾಶಕರವಾದ ಬೂಜುರೋಗವಾಗಿದೆ. ಅದನ್ನು ಬೆಂಕಿಯಿಂದ ಸುಡಬೇಕು.</verse>
				<verse number="53">“ಯಾಜಕನು ಪರೀಕ್ಷಿಸಿದಾಗ ಬೂಜು ಉಡುಪಿನಲ್ಲಾಗಲಿ, ಹಾಸಿನಲ್ಲಾಗಲಿ, ಹೊಕ್ಕಿನಲ್ಲಾಗಲಿ, ತೊಗಲಿನ ವಸ್ತುಗಳಲ್ಲಾಗಲಿ ಹರಡದಿದ್ದರೆ,</verse>
				<verse number="54">ಆಗ ಯಾಜಕನು ಆ ಬೂಜುಳ್ಳ ವಸ್ತುವನ್ನು ತೊಳೆಯುವಂತೆ ಆಜ್ಞಾಪಿಸಿ, ಅದನ್ನು ಅವನು ಏಳು ದಿನಗಳ ಕಾಲ ಹೆಚ್ಚಾಗಿ ಪ್ರತ್ಯೇಕವಾಗಿ ಇರಿಸಬೇಕು.</verse>
				<verse number="55">ಅದನ್ನು ತೊಳೆದಾದ ಮೇಲೆ ಯಾಜಕನು ಆ ಬೂಜನ್ನು ಪರೀಕ್ಷಿಸಬೇಕು. ಆ ಬೂಜು ಬಣ್ಣವನ್ನು ಬದಲಾಯಿಸದಿದ್ದರೆ ಮತ್ತು ಹರಡದಿದ್ದರೆ ಅದು ಅಶುದ್ಧವಾಗಿರುವುದು. ಅದನ್ನು ನೀನು ಬೆಂಕಿಯಿಂದ ಸುಡಬೇಕು. ಅದು ಒಳಗಿನಿಂದಾಗಲಿ ಇಲ್ಲವೆ ಹೊರಗಿನಿಂದಾಗಲಿ ವ್ಯಾಪಿಸಿದೆ.</verse>
				<verse number="56">ಯಾಜಕನು ಅದನ್ನು ಪರೀಕ್ಷಿಸಿದರೆ, ಆ ಬೂಜು ಹಿಡಿದ ವಸ್ತುವನ್ನು ತೊಳೆದ ನಂತರ ಮಬ್ಬಾಗಿದ್ದರೆ ಅವನು ಅದನ್ನು ಬಟ್ಟೆಯಿಂದಾಗಲಿ, ಚರ್ಮದಿಂದಾಗಲಿ, ಹಾಸಿನಿಂದಾಗಲಿ, ಹೊಕ್ಕಿನಿಂದಾಗಲಿ ಹರಿದುಹಾಕಬೇಕು.</verse>
				<verse number="57">ಆದರೆ ಉಣ್ಣೆ ಬಟ್ಟೆಯಲ್ಲಾಗಲಿ, ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ ಹಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನಲ್ಲಾಗಲಿ ಕಂಡು ಬಂದರೆ ಅದು ಹರಡುವ ಬೂಜು ಮತ್ತು ಬೂಜಿರುವ ವಸ್ತುವನ್ನು ನೀನು ಬೆಂಕಿಯಿಂದ ಸುಡಬೇಕು.</verse>
				<verse number="58">ನೀನು ತೊಳೆದ ಮೇಲೆ ಆ ಬೂಜು ಯಾವ ವಸ್ತುವಿನಿಂದ ಹೊರಟು ಹೋಯಿತೋ, ಆ ಬಟ್ಟೆಯನ್ನೂ, ಹಾಸನ್ನೂ, ಹೊಕ್ಕನ್ನೂ ಇಲ್ಲವೆ ಚರ್ಮದ ಯಾವುದೇ ಸಾಮಗ್ರಿಗಳನ್ನೂ ಎರಡನೆಯ ಸಾರಿ ತೊಳೆಯಬೇಕು. ಆಗ ಅದು ಶುದ್ಧವಾಗಿರುವುದು.”</verse>
				<verse number="59">ಉಣ್ಣೆ ಬಟ್ಟೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ, ನೇಯ್ಗೆಯಲ್ಲಾಗಲಿ, ಹಣಿಗೆಯಲ್ಲಾಗಲಿ, ತೊಗಲಿನ ವಸ್ತುವಿನ್ನಾಗಲಿ ಬೂಜು ಹಿಡಿದಿದ್ದರೆ ಪಾಲಿಸತಕ್ಕ ನಿಯಮಗಳಿವು. ಅದನ್ನು ಶುದ್ಧವೆಂದು ಇಲ್ಲವೆ ಅಶುದ್ಧವೆಂದು ನುಡಿಯುವುದಕ್ಕೆ ವಿಧಿಯು ಇಲ್ಲವೆ ಅಶುದ್ಧವೆಂದು ನುಡಿಯುವುದಕ್ಕೆ ವಿಧಿಯು ಇದೇ.</verse>
			</chapter>
			<chapter number="14">
				<verse number="1">ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ:</verse>
				<verse number="2">“ಚರ್ಮರೋಗಿಯು ತನ್ನ ಶುದ್ಧತೆಯ ದಿನದಲ್ಲಿ ಮಾಡತಕ್ಕ ನಿಯಮವು ಇದೇ. ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು.</verse>
				<verse number="3">ಯಾಜಕನು ಪಾಳೆಯದ ಆಚೆಗೆ ಹೊರಟು ಹೋಗಬೇಕು. ಚರ್ಮರೋಗದಿಂದ ರೋಗಿಯು ಗುಣವಾದನೆಂದು ಯಾಜಕನು ಪರೀಕ್ಷಿಸಿದರೆ,</verse>
				<verse number="4">ಆಗ ಶುದ್ಧಮಾಡಿಕೊಳ್ಳುವವನಿಗೋಸ್ಕರ ಜೀವವುಳ್ಳ ಮತ್ತು ಶುದ್ಧವಾದ ಎರಡು ಪಕ್ಷಿಗಳನ್ನೂ, ದೇವದಾರು ಕಟ್ಟಿಗೆಯನ್ನೂ, ರಕ್ತವರ್ಣದ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಳ್ಳುವಂತೆ ಯಾಜಕನು ಆಜ್ಞಾಪಿಸಬೇಕು.</verse>
				<verse number="5">ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ಕೊಲ್ಲಬೇಕೆಂದು ಯಾಜಕನು ಆಜ್ಞಾಪಿಸಬೇಕು.</verse>
				<verse number="6">ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ, ದೇವದಾರು ಕಟ್ಟಿಗೆಯನ್ನೂ, ರಕ್ತವರ್ಣದ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಂಡು, ಹರಿಯುವ ನೀರಿನ ಬಳಿಯಲ್ಲಿ ವಧಿಸಿದ ಆ ಪಕ್ಷಿಯ ರಕ್ತದಲ್ಲಿ ಅದ್ದಿ,</verse>
				<verse number="7">ಚರ್ಮರೋಗದಿಂದ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಚಿಮುಕಿಸಿ, ಅವನನ್ನು ಶುದ್ಧನೆಂದು ನುಡಿದು, ಆ ಜೀವವುಳ್ಳ ಪಕ್ಷಿಯನ್ನು ಬಯಲಾದ ಹೊಲದಲ್ಲಿ ಬಿಟ್ಟುಬಿಡಬೇಕು.</verse>
				<verse number="8">“ಶುದ್ಧವಾಗುವುದಕ್ಕಿರುವವನು ತನ್ನ ಬಟ್ಟೆಗಳನ್ನು ತೊಳೆದುಕೊಂಡವನಾಗಿ, ತನ್ನ ಎಲ್ಲಾ ಕೂದಲನ್ನು ಬೋಳಿಸಿಕೊಂಡು, ತಾನು ಶುದ್ಧನಾಗುವಂತೆ ತನ್ನನ್ನು ನೀರಿನಲ್ಲಿ ತೊಳೆದುಕೊಳ್ಳಬೇಕು. ತರುವಾಯ ಅವನು ಪಾಳೆಯದೊಳಗೆ ಬಂದು ತನ್ನ ಡೇರೆಯೊಳಗೆ ಏಳು ದಿನಗಳವರೆಗೆ ಕಾಯಬೇಕು.</verse>
				<verse number="9">ಆದರೆ ಏಳನೆಯ ದಿನದಲ್ಲಿ ಅವನು ತನ್ನ ತಲೆಯ ಎಲ್ಲಾ ಕೂದಲನ್ನೂ, ಗಡ್ಡವನ್ನೂ, ತನ್ನ ಕಣ್ಣುಹುಬ್ಬುಗಳನ್ನೂ ಮಾತ್ರವಲ್ಲದೆ ತನ್ನ ಎಲ್ಲಾ ಕೂದಲನ್ನೂ ಬೋಳಿಸಿಕೊಳ್ಳಬೇಕು. ಅವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಇದಲ್ಲದೆ ತನ್ನ ದೇಹವನ್ನು ಸಹ ನೀರಿನಲ್ಲಿ ತೊಳೆಯಬೇಕು. ಆಗ ಅವನು ಶುದ್ಧನಾಗಿರುವನು.</verse>
				<verse number="10">“ಎಂಟನೆಯ ದಿವಸದಲ್ಲಿ ಅವನು ಕಳಂಕರಹಿತವಾದ ಎರಡು ಕುರಿಮರಿಗಳನ್ನು ಮತ್ತು ಒಂದು ವರುಷದ ಕಳಂಕರಹಿತವಾದ ಹೆಣ್ಣು ಕುರಿಯನ್ನು, ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಐದು ಕಿಲೋಗ್ರಾಂ ಗೋಧಿ ಹಿಟ್ಟನ್ನು, ಒಂದನೆಯ ಮೂರು ಭಾಗ ಎಣ್ಣೆಯನ್ನು ತೆಗೆದುಕೊಳ್ಳಬೇಕು.</verse>
				<verse number="11">ಅವನನ್ನು ಶುದ್ಧಪಡಿಸುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಯೆಹೋವ ದೇವರ ಮುಂದೆ ನಿಲ್ಲಿಸಬೇಕು.</verse>
				<verse number="12">“ಆಗ ಯಾಜಕನು ಒಂದು ಗಂಡು ಕುರಿಮರಿಯನ್ನೂ, ಒಂದನೆಯ ಮೂರು ಭಾಗದಷ್ಟು ಎಣ್ಣೆಯನ್ನೂ ತೆಗೆದುಕೊಂಡು ಪ್ರಾಯಶ್ಚಿತ್ತ ಬಲಿಯಾಗಿ ಅರ್ಪಿಸಿ, ಅವುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.</verse>
				<verse number="13">ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪ ಪರಿಹಾರದ ಬಲಿಯನ್ನು, ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು. ದೋಷಪರಿಹಾರ ಬಲಿಯಂತೆಯೇ ಪ್ರಾಯಶ್ಚಿತ್ತ ಬಲಿಯೂ ಯಾಜಕನದಾಗಿದೆ. ಅದು ಮಹಾಪರಿಶುದ್ಧವಾದದ್ದು.</verse>
				<verse number="14">ಯಾಜಕನು ಪ್ರಾಯಶ್ಚಿತ್ತ ಬಲಿಯಲ್ಲಿ ಸ್ವಲ್ಪ ರಕ್ತವನ್ನು ತೆಗೆದುಕೊಳ್ಳಬೇಕು ಮತ್ತು ಯಾಜಕನು ಅದನ್ನು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಮತ್ತು ಬಲಗೈಯ ಹೆಬ್ಬೆರಳಿನ ಮೇಲೆಯೂ, ಬಲಗಾಲಿನ ಹೆಬ್ಬೆಟ್ಟಿನ ಮೇಲೆಯೂ ಹಚ್ಚಬೇಕು.</verse>
				<verse number="15">ಯಾಜಕನು ಒಂದನೆಯ ಮೂರು ಭಾಗದಷ್ಟು ಎಣ್ಣೆಯಲ್ಲಿ ಸ್ವಲ್ಪ ತೆಗೆದುಕೊಂಡು ತನ್ನ ಸ್ವಂತ ಎಡ ಅಂಗೈಯಲ್ಲಿ ಹೊಯ್ಯಬೇಕು.</verse>
				<verse number="16">ಯಾಜಕನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ತನ್ನ ಬಲಗೈ ಬೆರಳನ್ನು ಅದ್ದಿ, ತನ್ನ ಬೆರಳಿನಿಂದ ಆ ಎಣ್ಣೆಯನ್ನು ಏಳು ಸಾರಿ ಯೆಹೋವ ದೇವರ ಎದುರಿನಲ್ಲಿ ಚಿಮುಕಿಸಬೇಕು.</verse>
				<verse number="17">ತನ್ನ ಕೈಯಲ್ಲಿ ಮಿಕ್ಕಿದ ಎಣ್ಣೆಯನ್ನು ಯಾಜಕನು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಯ ಮೇಲೆ ಮತ್ತು ಅವನ ಬಲಗೈಯ ಹೆಬ್ಬೆರಳಿನ ಮೇಲೆ, ಅವನ ಬಲಗಾಲಿನ ಹೆಬ್ಬೆಟ್ಟಿನ ಮೇಲೆ ಹಚ್ಚಬೇಕು. ಅದೇ ರೀತಿ ಪ್ರಾಯಶ್ಚಿತ್ತ ಬಲಿಯ ರಕ್ತದ ಮೇಲೆ ಹಚ್ಚಬೇಕು.</verse>
				<verse number="18">ಯಾಜಕನ ಕೈಯಲ್ಲಿರುವ ಉಳಿದ ಆ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯಬೇಕು. ಯಾಜಕನು ಅವನಿಗಾಗಿ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು.</verse>
				<verse number="19">“ಯಾಜಕನು ಪಾಪ ಪರಿಹಾರದ ಬಲಿಯನ್ನು ಸಮರ್ಪಿಸಿ, ಶುದ್ಧಮಾಡಿಸಿಕೊಳ್ಳುವವನಿಗೋಸ್ಕರ ಅವನ ಅಶುದ್ಧತೆಗಾಗಿ ಪ್ರಾಯಶ್ಚಿತ್ತ ಮಾಡಬೇಕು. ತರುವಾಯ ಅವನು ದಹನಬಲಿಯ ಪ್ರಾಣಿಯನ್ನು ವಧಿಸಬೇಕು.</verse>
				<verse number="20">ಯಾಜಕನು ದಹನಬಲಿಯನ್ನೂ, ಧಾನ್ಯ ಸಮರ್ಪಣೆಯನ್ನೂ ಬಲಿಪೀಠದ ಮೇಲೆ ಸಮರ್ಪಿಸಬೇಕು. ಇದಲ್ಲದೆ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅವನು ಶುದ್ಧನಾಗಿರುವನು.</verse>
				<verse number="21">“ಅವನು ಬಡವನಾಗಿದ್ದರೆ ಅಷ್ಟೊಂದು ತರುವುದಕ್ಕೆ ಆಗದಿದ್ದರೆ, ಅವನು ತನ್ನ ಪ್ರಾಯಶ್ಚಿತ್ತಕ್ಕಾಗಿ ಬಲಿ ಕೊಡಲು ನೈವೇದ್ಯ ಮಾಡುವುದಕ್ಕೆ ಒಂದು ಕುರಿಮರಿಯನ್ನೂ, ಎಣ್ಣೆ ಬೆರೆಸಿದ ಒಂದುವರೆ ಕಿಲೋಗ್ರಾಂ ನಯವಾದ ಹಿಟ್ಟನ್ನೂ, ಒಂದನೆಯ ಮೂರು ಭಾಗದಷ್ಟು ಎಣ್ಣೆಯನ್ನೂ</verse>
				<verse number="22">ಮತ್ತು ಅವನಿಂದಾಗುವಷ್ಟು ಎರಡು ಬೆಳವಕ್ಕಿಗಳನ್ನೂ ಇಲ್ಲವೆ ಎರಡು ಪಾರಿವಾಳದ ಮರಿಗಳನ್ನೂ ತೆಗೆದುಕೊಳ್ಳಬೇಕು. ಅವುಗಳಲ್ಲಿ ಒಂದು ಪಾಪ ಪರಿಹಾರದ ಬಲಿಗಾಗಿಯೂ, ಇನ್ನೊಂದು ದಹನಬಲಿಗಾಗಿಯೂ ಇರುವುದು.</verse>
				<verse number="23">“ಅವನು ತನ್ನ ಶುದ್ಧತೆಗಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಗೆ ಯಾಜಕನ ಹತ್ತಿರಕ್ಕೆ ಯೆಹೋವ ದೇವರ ಎದುರಿನಲ್ಲಿ ತರಬೇಕು.</verse>
				<verse number="24">ಯಾಜಕನು ಪ್ರಾಯಶ್ಚಿತ್ತದ ಸಮರ್ಪಣೆಯ ಆ ಕುರಿಮರಿಯನ್ನೂ, ಒಂದನೆಯ ಮೂರು ಭಾಗದಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಯಾಜಕನು ಅವುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.</verse>
				<verse number="25">ಅವನು ಪ್ರಾಯಶ್ಚಿತ್ತ ಬಲಿಗಾಗಿ ಆ ಕುರಿಮರಿಯನ್ನು ವಧಿಸಬೇಕು. ಆ ಪ್ರಾಯಶ್ಚಿತ್ತ ಬಲಿಯ ಸ್ವಲ್ಪ ರಕ್ತವನ್ನು ಯಾಜಕನು ತೆಗೆದುಕೊಂಡು, ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಯ ಮೇಲೆಯೂ, ಅವನ ಬಲಗೈಯ ಹೆಬ್ಬೆರಳಿನ ಮೇಲೆಯೂ ಹಚ್ಚಬೇಕು.</verse>
				<verse number="26">ಇದಲ್ಲದೆ ಯಾಜಕನು ತನ್ನ ಸ್ವಂತ ಎಡ ಅಂಗೈಯಲ್ಲಿ ಎಣ್ಣೆಯನ್ನು ಸುರಿಯಬೇಕು.</verse>
				<verse number="27">ಯಾಜಕನು ತನ್ನ ಬಲಬೆರಳಿನಿಂದ ತನ್ನ ಎಡಗೈಯಲ್ಲಿರುವ ಸ್ವಲ್ಪ ಎಣ್ಣೆಯನ್ನು ಏಳು ಸಾರಿ ಯೆಹೋವ ದೇವರ ಎದುರಿನಲ್ಲಿ ಚಿಮುಕಿಸಬೇಕು.</verse>
				<verse number="28">ಇದಲ್ಲದೆ ಯಾಜಕನು ತನ್ನ ಕೈಯಲ್ಲಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಯ ಮೇಲೆಯೂ, ಅವನ ಬಲಗೈಯ ಹೆಬ್ಬೆರಳಿನ ಮೇಲೆಯೂ, ಅವನ ಬಲಗಾಲಿನ ಹೆಬ್ಬೆಟ್ಟಿನ ಮೇಲೆಯೂ ಪ್ರಾಯಶ್ಚಿತ್ತ ಬಲಿಯ ರಕ್ತದ ಸ್ಥಳದ ಮೇಲೆಯೂ ಹಚ್ಚಬೇಕು.</verse>
				<verse number="29">ಯಾಜಕನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದು, ಯೆಹೋವ ದೇವರ ಎದುರಿನಲ್ಲಿ ಅವನಿಗಾಗಿ ಪ್ರಾಯಶ್ಚಿತ್ತ ಮಾಡಬೇಕು.</verse>
				<verse number="30">ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಬೆಳವಕ್ಕಿಗಳಲ್ಲಿಯಾಗಲಿ ಪಾರಿವಾಳದ ಮರಿಗಳಲ್ಲಿಯಾಗಲಿ ಸಮರ್ಪಿಸಬೇಕು.</verse>
				<verse number="31">ಅದರಂತೆಯೇ ಅವನು ತನ್ನ ಸ್ಥಿತಿಗೆ ತಕ್ಕಂತೆ ಒಂದನ್ನು ಪಾಪ ಪರಿಹಾರದ ಬಲಿಗಾಗಿ ಮತ್ತು ಇನ್ನೊಂದನ್ನು ದಹನಬಲಿಗಾಗಿ ಧಾನ್ಯಸಮರ್ಪಣೆಯೊಂದಿಗೆ ಸಮರ್ಪಿಸಬೇಕು, ಶುದ್ಧಪಡಿಸಿಕೊಳ್ಳುವವನಿಗೋಸ್ಕರ ಯಾಜಕನು ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.”</verse>
				<verse number="32">ಚರ್ಮರೋಗವುಳ್ಳವನು ಶುದ್ಧತೆ ಮಾಡಿಸಿಕೊಳ್ಳಲು ಗತಿಯಿಲ್ಲದವನಿಗೆ ತನ್ನ ಶುದ್ಧತೆಗಾಗಿ ಇರುವ ನಿಯಮವು ಇದೇ.</verse>
				<verse number="33">ಯೆಹೋವ ದೇವರು ಮೋಶೆ ಮತ್ತು ಆರೋನರೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ:</verse>
				<verse number="34">“ನಾನು ನಿಮಗೆ ಸೊತ್ತಾಗಿ ಕೊಡುವ ಕಾನಾನ್ ದೇಶದೊಳಗೆ ನೀವು ಬಂದ ಬಳಿಕ ನಾನು ನಿಮಗೆ ಸೊತ್ತಾಗಿ ಕೊಡುವ ಮನೆಯಲ್ಲಿ ಬೂಜನ್ನು ಬರಮಾಡಿದಾಗ,</verse>
				<verse number="35">ಮನೆಯವನು ಯಾಜಕನ ಬಳಿಗೆ ಬಂದು, ‘ನನ್ನ ಮನೆಯಲ್ಲಿ ಬೂಜಿನ ಗುರುತಿದ್ದಂತೆ ಕಾಣುತ್ತಿದೆ,’ ಎಂದು ಹೇಳಬೇಕು.</verse>
				<verse number="36">ಆಗ ಯಾಜಕನು ಆ ಮನೆಯಲ್ಲಿ ಬೂಜನ್ನು ಪರೀಕ್ಷಿಸುವುದಕ್ಕೆ ಹೋಗುವ ಮೊದಲು, ಆ ಮನೆಯೊಳಗೆ ಇರುವವುಗಳು ಅಶುದ್ಧವಾಗದಂತೆ ಆ ಮನೆಯನ್ನು ಬರಿದುಮಾಡಬೇಕೆಂದು ಆಜ್ಞಾಪಿಸಬೇಕು. ತರುವಾಯ ಯಾಜಕನು ಮನೆಯನ್ನು ಪರೀಕ್ಷಿಸುವುದಕ್ಕೆ ಒಳಗೆ ಹೋಗಬೇಕು.</verse>
				<verse number="37">ಅವನು ಆ ಬೂಜನ್ನು ಪರೀಕ್ಷಿಸಿದಾಗ, ಅದು ಮನೆಯ ಗೋಡೆಗಳಲ್ಲಿ ತಗ್ಗಾದ ಸಾಲುಗಳಲ್ಲಿ ಹಸಿರಾಗಿಯಾದರೂ, ಕೆಂಪಾಗಿ ಗೋಡೆಯ ಮಟ್ಟಕ್ಕಿಂತ ತಗ್ಗಿನಲ್ಲಿ ತೋರಿಬಂದರೆ,</verse>
				<verse number="38">ಯಾಜಕನು ಆ ಮನೆಯ ಹೊರಗೆ ಮನೆಯ ಬಾಗಿಲ ಬಳಿಗೆ ಹೋಗಿ ಅದನ್ನು ಏಳು ದಿವಸಗಳವರೆಗೆ ಮುಚ್ಚಬೇಕು.</verse>
				<verse number="39">ಏಳನೆಯ ದಿನದಲ್ಲಿ ಯಾಜಕನು ತಿರುಗಿಬಂದು ಪರೀಕ್ಷಿಸಿದಾಗ, ಆ ಬೂಜು ಮನೆಯ ಗೋಡೆಗಳಲ್ಲಿ ಹರಡಿಕೊಂಡಿದ್ದರೆ,</verse>
				<verse number="40">ಬೂಜುಳ್ಳ ಕಲ್ಲುಗಳನ್ನು ಅವರು ತೆಗೆದು ಪಟ್ಟಣದ ಆಚೆಗೆ ಅಶುದ್ಧ ಸ್ಥಳದಲ್ಲಿ ಬಿಸಾಡಬೇಕೆಂದೂ,</verse>
				<verse number="41">ಆ ಮನೆಯ ಒಳಭಾಗದಲ್ಲಿ ಸುತ್ತಲೂ ಕೆರೆದು, ಕೆರೆದ ಧೂಳನ್ನು ಪಟ್ಟಣದ ಹೊರಗೆ ಅಶುದ್ಧ ಸ್ಥಳದಲ್ಲಿ ಸುರಿಯಬೇಕೆಂದೂ,</verse>
				<verse number="42">ಅವರು ಆ ಕಲ್ಲುಗಳಿಗೆ ಬದಲಾಗಿ ಬೇರೆ ಕಲ್ಲುಗಳನ್ನು ತೆಗೆದುಕೊಳ್ಳಬೇಕೆಂದೂ ಯಾಜಕನು ಆಜ್ಞಾಪಿಸಬೇಕು, ಅವನು ಬೇರೆ ಗಾರೆಯಿಂದ ಆ ಮನೆಗೆ ಗಿಲಾವುಮಾಡಬೇಕು.</verse>
				<verse number="43">“ಅವನು ಆ ಮನೆಯ ಕಲ್ಲುಗಳನ್ನು ತೆಗೆಸಿ ಅದನ್ನು ಕೆತ್ತಿ ಗಿಲಾವು ಮಾಡಿಸಿದ ಮೇಲೆ ಆ ಬೂಜು ತಿರುಗಿ ಕಾಣಬಂದರೆ,</verse>
				<verse number="44">ಯಾಜಕನು ಬಂದು ಪರೀಕ್ಷಿಸಬೇಕು. ಆಗ ಬೂಜು ಮನೆಯಲ್ಲಿ ಹರಡಿಕೊಂಡಿದ್ದರೆ, ಆ ಮನೆಯಲ್ಲಿ ಅದೊಂದು ನಾಶಕರವಾದ ಬೂಜು ಆಗಿರುವುದು, ಆ ಮನೆ ಅಶುದ್ಧವಾದದ್ದು.</verse>
				<verse number="45">ಅವನು ಆ ಮನೆಯನ್ನು ಕೆಡವಿಹಾಕಿ, ಅದರ ಕಲ್ಲುಗಳನ್ನೂ, ಮರಗಳನ್ನೂ, ಆ ಮನೆಯ ಎಲ್ಲಾ ಧೂಳನ್ನೂ ತೆಗೆದು, ಅವುಗಳನ್ನು ಪಟ್ಟಣದ ಹೊರಗೆ ಅಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.</verse>
				<verse number="46">“ಆ ಮನೆಯು ಮುಚ್ಚಿರುವ ಕಾಲದಲ್ಲೆಲ್ಲಾ ಅದರೊಳಗೆ ಯಾವನಾದರೂ ಹೋದರೆ ಸಾಯಂಕಾಲದವರೆಗೆ ಅವನು ಅಶುದ್ಧನಾಗಿರುವನು.</verse>
				<verse number="47">ಆ ಮನೆಯೊಳಗೆ ಮಲಗಿಕೊಳ್ಳುವವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು. ಅಲ್ಲದೆ ಆ ಮನೆಯೊಳಗೆ ತಿನ್ನುವವನು ತನ್ನ ಬಟ್ಟೆಗಳನ್ನು ತೊಳೆದುಕೊಳ್ಳಬೇಕು.</verse>
				<verse number="48">“ಆದರೆ ಯಾಜಕನು ಒಳಗೆ ಬಂದು ಅದನ್ನು ಪರೀಕ್ಷಿಸಿದಾಗ, ಗಿಲಾವು ಮಾಡಿದ ನಂತರ ಆ ಮನೆಯಲ್ಲಿ ಆ ಬೂಜು ಹರಡಿಕೊಂಡಿರದಿದ್ದರೆ, ಆ ಮನೆಯು ಶುದ್ಧವೆಂದು ಯಾಜಕನು ನಿರ್ಣಯಿಸಬೇಕು. ಏಕೆಂದರೆ ಆ ಬೂಜು ಹೊರಟುಹೋಯಿತು.</verse>
				<verse number="49">ಆ ಮನೆಯನ್ನು ಶುದ್ಧಪಡಿಸುವುದಕ್ಕೋಸ್ಕರ ಎರಡು ಪಕ್ಷಿಗಳನ್ನೂ, ದೇವದಾರು ಕಟ್ಟಿಗೆಯನ್ನೂ, ರಕ್ತವರ್ಣ ದಾರವನ್ನೂ, ಹಿಸ್ಸೋಪನ್ನೂ ತೆಗೆದುಕೊಳ್ಳಬೇಕು.</verse>
				<verse number="50">ಆ ಪಕ್ಷಿಗಳಲ್ಲಿ ಒಂದನ್ನು ಹರಿಯುವ ನೀರಿನ ಮೇಲೆ ಒಂದು ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕು.</verse>
				<verse number="51">ತರುವಾಯ ದೇವದಾರು ಕಟ್ಟಿಗೆಯನ್ನೂ, ಹಿಸ್ಸೋಪನ್ನೂ, ರಕ್ತವರ್ಣ ದಾರವನ್ನೂ, ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು, ಅವುಗಳನ್ನು ವಧಿಸಿದ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ, ಏಳು ಸಾರಿ ಆ ಮನೆಗೆ ಚಿಮುಕಿಸಬೇಕು.</verse>
				<verse number="52">ಅವನು ಪಕ್ಷಿಯ ರಕ್ತದಿಂದಲೂ, ಹರಿಯುವ ನೀರಿನಿಂದಲೂ, ಸಜೀವವುಳ್ಳ ಪಕ್ಷಿಯಿಂದಲೂ, ದೇವದಾರು ಕಟ್ಟಿಗೆಯಿಂದಲೂ, ಹಿಸ್ಸೋಪಿನಿಂದಲೂ, ರಕ್ತವರ್ಣ ದಾರದಿಂದಲೂ ಆ ಮನೆಯನ್ನು ಶುದ್ಧೀಕರಿಸಬೇಕು.</verse>
				<verse number="53">ಆದರೆ ಜೀವವುಳ್ಳ ಆ ಪಕ್ಷಿಯನ್ನು ಪಟ್ಟಣದ ಆಚೆಗೆ ಬಯಲಾದ ಹೊಲಗಳಲ್ಲಿ ಬಿಟ್ಟುಬಿಡಬೇಕು. ಆ ಮನೆಗೋಸ್ಕರ ಪಾಪದ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅದು ಶುದ್ಧವಾಗುವುದು.”</verse>
				<verse number="54">ಎಲ್ಲಾ ವಿಧವಾದ ಚರ್ಮರೋಗಕ್ಕೂ, ಇಸಬಿಗೂ,</verse>
				<verse number="55">ಬಟ್ಟೆಯ ಮತ್ತು ಮನೆಯ ಬೂಜಿಗೂ,</verse>
				<verse number="56">ಬಾವು, ಚರ್ಮವ್ಯಾಧಿಗೂ, ಹೊಳೆಯುವ ಕಲೆಗೂ</verse>
				<verse number="57">ಅವುಗಳ ಶುದ್ಧಾಶುದ್ಧ ಬೇಧವನ್ನು ಬೋಧಿಸುವ ನಿಯಮಗಳು ಇವೇ. ಚರ್ಮರೋಗಗಳ ಹಾಗೂ ಬೂಜಿನ ವಿಷಯದಲ್ಲಿರುವ ನಿಯಮಗಳು ಇವೇ.</verse>
			</chapter>
			<chapter number="15">
				<verse number="1">ಯೆಹೋವ ದೇವರು ಮೋಶೆ ಆರೋನರೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="2">“ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ಒಬ್ಬ ಪುರುಷನ ಶರೀರದಿಂದ ಮೇಹಸ್ರಾವ ಹರಿಯುವುದಾಗಿದ್ದರೆ, ಆ ಸ್ರಾವದ ನಿಮಿತ್ತವಾಗಿ ಅವನು ಅಶುದ್ಧನಾಗಿರುವನು.</verse>
				<verse number="3">ಅವನ ಸ್ರಾವದಲ್ಲಿ ಅದು ಅವನ ಅಶುದ್ಧತೆಯಾಗಿರುವುದು. ಅವನ ಶರೀರವು ತನ್ನ ಸ್ರಾವದಿಂದ ಹರಿಯುವುದಾಗಿದ್ದರೂ, ಸ್ರಾವವು ಅವನ ಶರೀರದಲ್ಲಿ ನಿಂತು ಹೋಗಿದ್ದರೂ, ಅದು ಅವನ ಅಶುದ್ಧತೆಯಾಗಿರುವುದು. ಅವನ ವಿಸರ್ಜನೆಯು ಹೇಗೆ ಅಶುದ್ಧತೆಯನ್ನು ತರುತ್ತದೆ ಅಂದರೆ:</verse>
				<verse number="4">“ ‘ಸ್ರಾವವಿರುವವನು ಮಲಗುವ ಪ್ರತಿಯೊಂದು ಹಾಸಿಗೆಯೂ ಅಶುದ್ಧವಾದದ್ದು, ಅವನು ಕೂತುಕೊಳ್ಳುವ ಪ್ರತಿಯೊಂದು ವಸ್ತುವೂ ಅಶುದ್ಧವಾಗಿರುವುದು.</verse>
				<verse number="5">ಅವನ ಹಾಸಿಗೆಯನ್ನು ಮುಟ್ಟುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು, ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರಬೇಕು.</verse>
				<verse number="6">ಇದಲ್ಲದೆ ಸ್ರಾವವಿರುವವನು ಕುಳಿತುಕೊಂಡ ಯಾವುದೇ ವಸ್ತುವಿನ ಮೇಲೆ ಕುಳಿತುಕೊಳ್ಳುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರುವರು.</verse>
				<verse number="7">“ ‘ಸ್ರಾವವಿರುವವನ ಶರೀರವನ್ನು ಮುಟ್ಟುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು ಮತ್ತು ಸಂಜೆಯವರೆಗೆ ಅವರು ಅಶುದ್ಧನಾಗಿರಬೇಕು.</verse>
				<verse number="8">“ ‘ಶುದ್ಧರಾಗಿರುವವರ ಮೇಲೆ ಸ್ರಾವವಿರುವವನು ಉಗುಳಿದರೆ, ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರಬೇಕು.</verse>
				<verse number="9">“ ‘ಸ್ರಾವವುಳ್ಳವನು ಏರಿ ಕುಳಿತುಕೊಂಡಿದ್ದ ತಡಿಯು ಅಶುದ್ಧವಾಗಿರುವುದು.</verse>
				<verse number="10">ಅವನ ಕೆಳಗಿರುವ ಯಾವುದಾದರೂ ವಸ್ತುವನ್ನು ಮುಟ್ಟಿದವನು ಸಂಜೆಯವರೆಗೆ ಅಶುದ್ಧನಾಗಿರಬೇಕು, ಅವುಗಳಲ್ಲಿ ಯಾವುದನ್ನಾದರೂ ಹೊತ್ತುಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವನು ಅಶುದ್ಧನಾಗಿರುವನು.</verse>
				<verse number="11">“ ‘ಸ್ರಾವವುಳ್ಳವನು ತನ್ನ ಕೈಗಳನ್ನು ನೀರಿನಿಂದ ತೊಳೆದುಕೊಳ್ಳದೆ, ಯಾರನ್ನಾದರೂ ಮುಟ್ಟಿದರೆ ಅವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವರು ಅಶುದ್ಧರಾಗಿರಬೇಕು.</verse>
				<verse number="12">“ ‘ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆಯಬೇಕು. ಮರದ ಪ್ರತಿಯೊಂದು ಪಾತ್ರೆಯನ್ನು ನೀರಿನಲ್ಲಿ ಜಾಲಿಸಿ ತೊಳೆಯಬೇಕು.</verse>
				<verse number="13">“ ‘ಸ್ರಾವವುಳ್ಳವನು ತನ್ನ ಸ್ರಾವದಿಂದ ತನ್ನ ಶುದ್ಧತೆಗಾಗಿ ಏಳು ದಿನಗಳನ್ನು ಲೆಕ್ಕ ಮಾಡಿ, ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಇದಲ್ಲದೆ ಹರಿಯುವ ನೀರಿನಲ್ಲಿ ಸ್ನಾನಮಾಡಬೇಕು. ಆಗ ಅವನು ಶುದ್ಧನಾಗಿರುವನು.</verse>
				<verse number="14">ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳ ಮರಿಗಳನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲ ಬಳಿ ಯೆಹೋವ ದೇವರ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು.</verse>
				<verse number="15">ಆಗ ಯಾಜಕನು ಒಂದನ್ನು ಪಾಪ ಪರಿಹಾರದ ಬಲಿಗಾಗಿ ಮತ್ತು ಇನ್ನೊಂದನ್ನು ದಹನಬಲಿಗಾಗಿ ಅವುಗಳನ್ನು ಸಮರ್ಪಿಸಬೇಕು, ಯಾಜಕನು ಅವನ ಸ್ರಾವಕ್ಕೋಸ್ಕರ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತವನ್ನು ಮಾಡಬೇಕು.</verse>
				<verse number="16">“ ‘ಒಬ್ಬನಿಗೆ ವೀರ್ಯವು ಹೊರಟು ಹೋದರೆ, ಅವನು ತನ್ನ ಶರೀರವನ್ನೆಲ್ಲಾ ನೀರಿನಲ್ಲಿ ತೊಳೆದು, ಸಂಜೆಯವರೆಗೆ ಅಶುದ್ಧನಾಗಿರಬೇಕು.</verse>
				<verse number="17">ವೀರ್ಯವು ಬಿದ್ದ ಪ್ರತಿಯೊಂದು ಬಟ್ಟೆ ಮತ್ತು ಪ್ರತಿಯೊಂದು ಚರ್ಮವನ್ನು ನೀರಿನಿಂದ ತೊಳೆದು, ಸಂಜೆಯವರೆಗೆ ಅಶುದ್ಧವಾಗಿರಬೇಕು.</verse>
				<verse number="18">ಇದಲ್ಲದೆ ಸ್ತ್ರೀಯೊಂದಿಗೆ ಒಬ್ಬನು ಮಲಗಿ, ವೀರ್ಯ ಸ್ರಾವವಾಗಿದ್ದರೆ, ಅವರಿಬ್ಬರೂ ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅಶುದ್ಧರಾಗಿರಬೇಕು.</verse>
				<verse number="19">“ ‘ಒಬ್ಬ ಸ್ತ್ರೀಗೆ ತನ್ನ ಶರೀರದಲ್ಲಿ ರಕ್ತ ಸ್ರಾವವಿದ್ದರೆ, ಅವಳು ಏಳು ದಿವಸಗಳವರೆಗೆ ಪ್ರತ್ಯೇಕವಾಗಿರಬೇಕು, ಅವಳನ್ನು ಯಾರಾದರೂ ಮುಟ್ಟಿದರೆ, ಅವರು ಸಂಜೆಯವರೆಗೆ ಅಶುದ್ಧರಾಗಿರುವರು.</verse>
				<verse number="20">“ ‘ಅವಳು ಮುಟ್ಟಾದಾಗ ಅವಳು ಮಲಗುವ ಪ್ರತಿಯೊಂದು ಹಾಸಿಗೆ ಅಶುದ್ಧವಾಗಿರುವುದು. ಅವಳು ಕೂತುಕೊಳ್ಳುವ ಪ್ರತಿಯೊಂದು ವಸ್ತುವು ಅಶುದ್ಧವಾಗಿರುವುದು.</verse>
				<verse number="21">ಅವಳ ಹಾಸಿಗೆಯನ್ನು ಮುಟ್ಟುವವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅಶುದ್ಧರಾಗಿರುವರು.</verse>
				<verse number="22">ಅವಳು ಯಾವುದರ ಮೇಲೆ ಕುಳಿತಿದ್ದಳೋ, ಅದನ್ನು ಮುಟ್ಟಿದವರು ತಮ್ಮ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು.</verse>
				<verse number="23">ಇದಲ್ಲದೆ ಅವಳ ಹಾಸಿಗೆಯ ಮೇಲಾಗಲಿ ಇಲ್ಲವೆ ಅವಳು ಕುಳಿತುಕೊಂಡ ಯಾವದರ ಮೇಲಾಗಲಿ ಇರುವುದನ್ನು ಮುಟ್ಟಿದವರು ಸಂಜೆಯವರೆಗೆ ಅಶುದ್ಧರಾಗಿರುವರು.</verse>
				<verse number="24">“ ‘ಯಾವನಾದರೂ ಅವಳೊಂದಿಗೆ ಸಂಗಮಿಸಿದರೆ ಮತ್ತು ಅವಳ ಸ್ರಾವವು ಅವನಿಗೆ ತಗಲಿದರೆ, ಅವನು ಏಳು ದಿವಸ ಅಶುದ್ಧನಾಗಿರಬೇಕು. ಅವನು ಮಲಗಿಕೊಳ್ಳುವ ಹಾಸಿಗೆಯೆಲ್ಲಾ ಅಶುದ್ಧವಾಗಿರುವುದು.</verse>
				<verse number="25">“ ‘ಇದಲ್ಲದೆ ಸ್ತ್ರೀಗೆ ಅವಳ ಮುಟ್ಟಿನ ಕಾಲಕ್ಕಿಂತಲೂ ಹೆಚ್ಚು ದಿನ ರಕ್ತಸ್ರಾವವು ಇದ್ದರೆ, ಇಲ್ಲವೆ ಮುಟ್ಟಾಗಿದ್ದ ಕಾಲದಲ್ಲಾಗುವ ರಕ್ತಸ್ರಾವಕ್ಕಿಂತ ಹೆಚ್ಚಾಗಿ ಹರಿಯುತ್ತಿದ್ದರೆ, ಅವಳ ಸ್ರಾವದ ಅಶುದ್ಧತ್ವದ ಎಲ್ಲಾ ದಿನಗಳು ಅವಳ ಮುಟ್ಟಿನ ದಿನಗಳಂತೆ ಇರಬೇಕು. ಅವಳು ಅಶುದ್ಧಳಾಗಿರುವಳು.</verse>
				<verse number="26">ಅವಳ ಸ್ರಾವದ ಎಲ್ಲಾ ದಿನಗಳಲ್ಲಿ ಅವಳು ಮಲಗಿಕೊಳ್ಳುವ ಹಾಸಿಗೆಯು, ಅವಳ ಮುಟ್ಟಿನ ಹಾಸಿಗೆಯಂತೆ ಅಶುದ್ಧವಾಗಿರುವುದು. ಅವಳು ಕುಳಿತುಕೊಳ್ಳುವುದೆಲ್ಲವೂ ಅವಳ ಮುಟ್ಟಿನ ಅಶುದ್ಧತೆಯಂತೆಯೇ ಅಶುದ್ಧವಾಗಿರುವುದು.</verse>
				<verse number="27">ಯಾರಾದರೂ ಆ ವಸ್ತುಗಳನ್ನು ಮುಟ್ಟಿದರೆ ಅಶುದ್ಧರಾಗಿರುವರು. ತಮ್ಮ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಅವರು ಸಂಜೆಯವರೆಗೆ ಅಶುದ್ಧರಾಗಿರುವರು.</verse>
				<verse number="28">“ ‘ಅವಳು ತನ್ನ ಸ್ರಾವದಿಂದ ಶುದ್ಧಳಾದರೆ, ಅವಳು ಶುದ್ಧಳಾದಂದಿನಿಂದ ತನಗಾಗಿ ಏಳು ದಿನಗಳನ್ನು ಲೆಕ್ಕಿಸಬೇಕು.</verse>
				<verse number="29">ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು, ದೇವದರ್ಶನದ ಗುಡಾರದ ಬಾಗಿಲ ಬಳಿ ಯಾಜಕನ ಬಳಿಗೆ ತರಬೇಕು.</verse>
				<verse number="30">ಯಾಜಕನು ಒಂದನ್ನು ಪಾಪ ಪರಿಹಾರದ ಬಲಿಗಾಗಿಯೂ, ಇನ್ನೊಂದನ್ನು ದಹನಬಲಿಗಾಗಿಯೂ ಸಮರ್ಪಿಸಬೇಕು, ಯಾಜಕನು ಅವಳಿಗಾಗಿ ಅವಳ ಅಶುದ್ಧತೆಯ ಸ್ರಾವದ ವಿಷಯದಲ್ಲಿ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು.</verse>
				<verse number="31">“ ‘ಹೀಗೆ ನೀವು ಇಸ್ರಾಯೇಲರನ್ನು ಅಶುದ್ಧತೆಯಿಂದ ದೂರವಾಗಿರುವಂತೆ ನೋಡಿಕೊಳ್ಳಬೇಕು. ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಅಶುದ್ಧ ಮಾಡದೆ, ತಮ್ಮ ಅಶುದ್ಧತ್ವದಿಂದ ಸಾಯುವುದಿಲ್ಲ.’ ”</verse>
				<verse number="32">ಮೇಹಸ್ರಾವವುಳ್ಳವನಿಗೂ ವೀರ್ಯ ಸ್ರಾವವುಳ್ಳವನಿಗೂ ಅವುಗಳಿಂದ ಅಶುದ್ಧವಾಗುವವರೆಗೂ ಇರುವ ನಿಯಮವು ಇದೆ.</verse>
				<verse number="33">ಮುಟ್ಟು ಇರುವವಳಿಗೂ, ಸ್ರಾವವಿರುವ ಪುರುಷನಿಗೂ ಸ್ತ್ರೀಗೂ, ಅಶುದ್ಧವಾದವಳ ಸಂಗಡ ಮಲಗಿದವನಿಗೂ ಇರುವ ನಿಯಮ ಇದೆ.</verse>
			</chapter>
			<chapter number="16">
				<verse number="1">ಆರೋನನ ಇಬ್ಬರು ಗಂಡು ಮಕ್ಕಳು ಯೆಹೋವ ದೇವರ ಸನ್ನಿಧಿಗೆ ಬಂದು ಸತ್ತಾಗ ಮೋಶೆಯಂದಿಗೆ ಯೆಹೋವ ದೇವರು ಮಾತನಾಡಿದರು.</verse>
				<verse number="2">ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನಿನ್ನ ಅಣ್ಣನಾದ ಆರೋನನು ಮಂಜೂಷದ ಮೇಲಿರುವ ಕರುಣಾಸನದ ಮುಂದಿರುವ ತೆರೆಯ ಒಳಗೆ ಮಹಾಪರಿಶುದ್ಧ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ, ಇಲ್ಲವಾದರೆ ಅವನು ಸಾಯುತ್ತಾನೆ, ಏಕೆಂದರೆ ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.</verse>
				<verse number="3">“ಈ ಸೂಚನೆಗಳನ್ನು ಸಂಪೂರ್ಣವಾಗಿ ಅನುಸರಿಸಿದ ನಂತರವೇ ಆರೋನನು ಮಹಾಪರಿಶುದ್ಧ ಸ್ಥಳಕ್ಕೆ ಪ್ರವೇಶಿಸಬೇಕು: ಪಾಪ ಪರಿಹಾರದ ಬಲಿಗಾಗಿ ಒಂದು ಹೋರಿಯನ್ನು ಮತ್ತು ದಹನಬಲಿಗಾಗಿ ಒಂದು ಟಗರನ್ನು ತೆಗೆದುಕೊಂಡು ಬರಬೇಕು.</verse>
				<verse number="4">ಅವನು ಪರಿಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟುಕೊಂಡು, ತನ್ನ ಶರೀರದ ಮೇಲೆ ನಾರುಬಟ್ಟೆಯ ಒಳಉಡುಪನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು, ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು. ಆದಕಾರಣ ಅವನು ನೀರಿನಿಂದ ಸ್ನಾನಮಾಡಿ ಅವುಗಳನ್ನು ಧರಿಸಿಕೊಳ್ಳಬೇಕು.</verse>
				<verse number="5">ಅವನು ಇಸ್ರಾಯೇಲರ ಸಭೆಯ ಕಡೆಯಿಂದ ಪಾಪ ಪರಿಹಾರದ ಬಲಿಗಾಗಿ ಎರಡು ಹೋತಗಳನ್ನು, ದಹನಬಲಿಗಾಗಿ ಒಂದು ಟಗರನ್ನೂ ತೆಗೆದುಕೊಳ್ಳಬೇಕು.</verse>
				<verse number="6">“ಇದಲ್ಲದೆ ಆರೋನನು ತನಗೋಸ್ಕರ ಪಾಪ ಪರಿಹಾರದ ಬಲಿಗಾಗಿ ತನ್ನ ಹೋರಿಯನ್ನು ಸಮರ್ಪಿಸಿ, ತನ್ನ ಮನೆಯವರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು.</verse>
				<verse number="7">ಅವನು ಎರಡು ಹೋತಗಳನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲ ಬಳಿಗೆ ತಂದು, ಅವುಗಳನ್ನು ಯೆಹೋವ ದೇವರ ಎದುರಿನಲ್ಲಿ ನಿಲ್ಲಿಸಬೇಕು.</verse>
				<verse number="8">ಆರೋನನು ಆ ಎರಡು ಹೋತಗಳಿಗಾಗಿ ಚೀಟುಹಾಕಬೇಕು. ಒಂದು ಚೀಟು ಯೆಹೋವ ದೇವರಿಗೋಸ್ಕರ, ಮತ್ತೊಂದು ಚೀಟು ಬಲಿಪಶುವಿಗೋಸ್ಕರ.</verse>
				<verse number="9">ಆರೋನನು ಯೆಹೋವ ದೇವರ ಚೀಟು ಬಿದ್ದ ಹೋತವನ್ನು ತಂದು, ಅದನ್ನು ಪಾಪ ಪರಿಹಾರದ ಬಲಿಗಾಗಿ ಸಮರ್ಪಿಸಬೇಕು.</verse>
				<verse number="10">ಆದರೆ ಬಲಿಪಶುವಿಗಾಗಿ ಚೀಟು ಬಿದ್ದ ಆ ಹೋತವನ್ನು ತನ್ನೊಂದಿಗೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ಸಜೀವವಾಗಿ ನಿಲ್ಲಿಸಿ, ಅದನ್ನು ಬಲಿಪಶುವಾಗಿ ಕಾಡಿನಲ್ಲಿ ಹೋಗುವಂತೆ ಬಿಟ್ಟುಬಿಡಬೇಕು.</verse>
				<verse number="11">“ಇದಲ್ಲದೆ ಆರೋನನು ಪಾಪ ಪರಿಹಾರದ ಬಲಿಯಾಗಿರುವ ಹೋರಿಯನ್ನು ತಂದು, ತನಗೋಸ್ಕರ ಮತ್ತು ತನ್ನ ಮನೆತನದವರಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ತನಗೋಸ್ಕರ ದೋಷಪರಿಹಾರಕ ಬಲಿಯಾಗಿ ಆ ಹೋರಿಯನ್ನು ವಧಿಸಬೇಕು.</verse>
				<verse number="12">ಅವನು ಯೆಹೋವ ದೇವರ ಸನ್ನಿಧಿಯಲ್ಲಿರುವ ಬಲಿಪೀಠದಿಂದ ಬೆಂಕಿಯ ಕೆಂಡಗಳನ್ನು ಧೂಪ ಸುಡುವ ಪಾತ್ರೆಯಲ್ಲಿ ತುಂಬಿಸಿ, ತನ್ನ ಎರಡು ಕೈತುಂಬ ಪರಿಮಳ ಧೂಪದ್ರವ್ಯದ ಚೂರ್ಣವನ್ನು ತೆಗೆದುಕೊಂಡು, ತೆರೆಯನ್ನು ದಾಟಿ ತರಬೇಕು.</verse>
				<verse number="13">ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕರುಣಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಯೆಹೋವ ದೇವರ ಎದುರಿನಲ್ಲಿ ಬೆಂಕಿಯ ಮೇಲೆ ಹಾಕಬೇಕು.</verse>
				<verse number="14">ಆ ಹೋರಿಯ ರಕ್ತದಿಂದ ಸ್ವಲ್ಪ ತೆಗೆದುಕೊಂಡು, ಕರುಣಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು, ಕರುಣಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೇಕು.</verse>
				<verse number="15">“ತರುವಾಯ ಅವನು ಜನರಿಗೋಸ್ಕರ ಪಾಪ ಪರಿಹಾರದ ಬಲಿಯಾಗಿರುವ ಹೋತವನ್ನು ವಧಿಸಿ, ಅದರ ರಕ್ತವನ್ನು ತೆರೆಯ ಒಳಗಡೆ ತಂದು, ಹೋರಿಯ ರಕ್ತದಿಂದ ಮಾಡಿದಂತೆಯೇ ಕರುಣಾಸನದ ಮೇಲೆಯೂ, ಕರುಣಾಸನದ ಮುಂದೆಯೂ ಚಿಮುಕಿಸಬೇಕು.</verse>
				<verse number="16">ಇಸ್ರಾಯೇಲರ ಅಶುದ್ಧತ್ವದ ನಿಮಿತ್ತವಾಗಿಯೂ, ಎಲ್ಲಾ ಅಪರಾಧಗಳಿಗಾಗಿಯೂ ಅವನು ಮಹಾಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಅವರು ಅಶುದ್ಧತ್ವದ ಮಧ್ಯದಲ್ಲಿ ಉಳಿದವರಿಗೋಸ್ಕರ ದೇವದರ್ಶನದ ಗುಡಾರಕ್ಕೂ ಅದರಂತೆಯೇ ಮಾಡಬೇಕು.</verse>
				<verse number="17">ಅವನು ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಮಹಾಪರಿಶುದ್ಧ ಸ್ಥಳಕ್ಕೆ ಹೋಗಿರುವಾಗ ತನಗೋಸ್ಕರವೂ, ತನ್ನ ಮನೆಯವರಿಗೆಲ್ಲರಿಗೋಸ್ಕರವೂ, ಇಸ್ರಾಯೇಲರ ಸಭೆಯವರೆಲ್ಲರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಿ ಹೊರಗೆ ಬರುವ ತನಕ ದೇವದರ್ಶನದ ಗುಡಾರದಲ್ಲಿ ಒಬ್ಬ ಮನುಷ್ಯನೂ ಇರಬಾರದು.</verse>
				<verse number="18">“ಅವನು ಯೆಹೋವ ದೇವರ ಎದುರಿನಲ್ಲಿರುವ ಬಲಿಪೀಠದ ಬಳಿಗೆ ಬಂದು, ಅದಕ್ಕೋಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಹೋರಿಯ ರಕ್ತವನ್ನೂ, ಹೋತದ ರಕ್ತವನ್ನೂ ತೆಗೆದುಕೊಂಡು ಬಲಿಪೀಠದ ಸುತ್ತಲೂ ಇರುವ ಕೊಂಬುಗಳಿಗೆ ಹಚ್ಚಬೇಕು.</verse>
				<verse number="19">ಅವನು ಏಳು ಸಾರಿ ಅದರ ಮೇಲೆ ರಕ್ತವನ್ನು ಚಿಮುಕಿಸಿ, ಅದನ್ನು ಶುದ್ಧಮಾಡಬೇಕು ಮತ್ತು ಇಸ್ರಾಯೇಲರ ಅಶುದ್ಧತೆಯನ್ನು ಹೋಗಲಾಡಿಸಿ, ಅದನ್ನು ಪರಿಶುದ್ಧ ಮಾಡಬೇಕು.</verse>
				<verse number="20">“ಹೀಗೆ ಮಹಾಪರಿಶುದ್ಧ ಸ್ಥಳಕ್ಕೂ, ಸಭೆಯ ಗುಡಾರಕ್ಕೂ, ಬಲಿಪೀಠಕ್ಕೂ ಸಂಧಾನದ ಕೊನೆಯಲ್ಲಿ ಅವನು ಒಂದು ಜೀವವುಳ್ಳ ಹೋತವನ್ನು ತರಬೇಕು.</verse>
				<verse number="21">ಆರೋನನು ಆ ಜೀವವುಳ್ಳ ಹೋತದ ತಲೆಯ ಮೇಲೆ ತನ್ನ ಎರಡೂ ಕೈಗಳನ್ನು ಇಟ್ಟು, ಅದರ ಮೇಲೆ ಇಸ್ರಾಯೇಲರ ಎಲ್ಲಾ ಅಕ್ರಮಗಳನ್ನೂ, ಅವರ ಎಲ್ಲಾ ಪಾಪಗಳಲ್ಲಿರುವ ದ್ರೋಹಗಳನ್ನೂ ಅರಿಕೆಮಾಡಿ ಅವುಗಳನ್ನು ಹೋತದ ತಲೆಯ ಮೇಲೆ ಇರಿಸಿ, ನೇಮಕವಾದ ಒಬ್ಬ ಮನುಷ್ಯನ ಕೈಯಿಂದ ಅದನ್ನು ಅಡವಿಯೊಳಗೆ ಕಳುಹಿಸಿಬಿಡಬೇಕು.</verse>
				<verse number="22">ಆ ಹೋತ ಅವರ ಎಲ್ಲಾ ಪಾಪಗಳನ್ನೂ ತನ್ನ ಮೇಲೆ ಹೊತ್ತುಕೊಂಡು ನಿರ್ಜನವಾದ ಸ್ಥಳಕ್ಕೆ ತೆಗೆದುಕೊಂಡು ಹೋಗುವಂತೆ ಆ ಮನುಷ್ಯನು ಹೋತವನ್ನು ಅಡವಿಗೆ ತೆಗೆದುಕೊಂಡುಹೋಗಿ ಅಲ್ಲೇ ಬಿಟ್ಟುಬಿಡಬೇಕು.</verse>
				<verse number="23">“ಆರೋನನು ದೇವದರ್ಶನದ ಗುಡಾರದೊಳಗೆ ಬಂದು, ತಾನು ಮಹಾಪರಿಶುದ್ಧ ಸ್ಥಳದೊಳಕ್ಕೆ ಹೋಗುವಾಗ ತೊಟ್ಟುಕೊಂಡಿದ್ದ ನಾರಿನ ಬಟ್ಟೆಗಳನ್ನು ತೆಗೆದುಹಾಕಿ ಅವುಗಳನ್ನು ಅಲ್ಲಿಯೇ ಬಿಡಬೇಕು.</verse>
				<verse number="24">ಅವನು ಪರಿಶುದ್ಧ ಸ್ಥಳದಲ್ಲಿ ನೀರಿನಲ್ಲಿ ಸ್ನಾನಮಾಡಿ, ತನ್ನ ಬಳಕೆಯ ಬಟ್ಟೆಗಳನ್ನು ಧರಿಸಿಕೊಂಡು, ಹೊರಗೆ ಬಂದು ತನ್ನ ದಹನಬಲಿಯನ್ನೂ, ಜನರ ದಹನಬಲಿಯನ್ನೂ ಸಮರ್ಪಿಸಿ ತನಗೋಸ್ಕರವೂ, ಜನರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು.</verse>
				<verse number="25">ಪಾಪ ಪರಿಹಾರದ ಬಲಿಯ ಕೊಬ್ಬನ್ನು ಬಲಿಪೀಠದ ಮೇಲೆ ಸುಡಬೇಕು.</verse>
				<verse number="26">“ಬಲಿಪಶುವಿಗಾಗಿ ಹೋತವನ್ನು ಹೋಗಲು ಬಿಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಿದ ಮೇಲೆ ಅವನು ಪಾಳೆಯದೊಳಕ್ಕೆ ಬರಬೇಕು.</verse>
				<verse number="27">ಇದಲ್ಲದೆ ಮಹಾಪರಿಶುದ್ಧ ಸ್ಥಳದಲ್ಲಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯಾವುದರ ರಕ್ತವು ತರಲಾಗಿತ್ತೋ, ಆ ಪಾಪ ಪರಿಹಾರದ ಬಲಿಯ ಹೋರಿಯನ್ನು ಮತ್ತು ದೋಷಪರಿಹಾರ ಬಲಿಯ ಹೋತವನ್ನು ಪಾಳೆಯದ ಆಚೆಗೆ ತೆಗೆದುಕೊಂಡುಹೋಗಿ ಅವುಗಳ ಚರ್ಮವನ್ನೂ, ಮಾಂಸವನ್ನೂ, ಸಗಣಿಯನ್ನೂ ಸುಡಬೇಕು.</verse>
				<verse number="28">ಅವುಗಳನ್ನು ಸುಡುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಿದ ನಂತರ ಪಾಳೆಯದೊಳಕ್ಕೆ ಬರಬೇಕು.</verse>
				<verse number="29">“ಇದು ನಿಮಗೆ ಶಾಶ್ವತವಾದ ನಿಯಮ: ಸ್ವದೇಶೀಯರಾದ ನೀವೂ, ನಿಮ್ಮೊಡನೆ ವಾಸಿಸುತ್ತಿರುವ ಪರಕೀಯರೂ, ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಎಲ್ಲಾ ಕೆಲಸಗಳನ್ನು ಬಿಟ್ಟು, ನಿಮ್ಮ ಆತ್ಮಗಳನ್ನು ಕುಂದಿಸಿಕೊಳ್ಳಬೇಕು.</verse>
				<verse number="30">ನೀವು ಯೆಹೋವ ದೇವರ ಸನ್ನಿಧಿಯಲ್ಲಿ ನಿಮ್ಮ ಎಲ್ಲಾ ಪಾಪಗಳಿಂದ ಶುದ್ಧರಾಗಿರುವಂತೆ ನಿಮ್ಮನ್ನು ಶುದ್ಧೀಕರಿಸುವ ಹಾಗೆ, ಆ ದಿನದಲ್ಲಿ ಯಾಜಕನು ನಿಮಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡುವನು.</verse>
				<verse number="31">ಇದೇ ನಿಮಗೆ ಸಬ್ಬತ್ ದಿನವಾಗಿರುವುದು. ನಿಮಗೆ ನಿತ್ಯವಾದ ನಿಯಮವಿರುವಂತೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ.</verse>
				<verse number="32">ಯಾವನು ತನ್ನ ತಂದೆಯ ಬದಲಾಗಿ ಮಹಾಯಾಜಕ ಉದ್ಯೋಗಕ್ಕೋಸ್ಕರ ಅಭಿಷಿಕ್ತನಾಗಿ ಪ್ರತಿಷ್ಟಿಸಲಾಗಿದ್ದಾನೋ, ಆ ಮಹಾಯಾಜಕನು ಪ್ರಾಯಶ್ಚಿತ್ತವನ್ನು ಮಾಡಬೇಕು. ಅವನು ಪರಿಶುದ್ಧ ಉಡುಪುಗಳಾದ ನಾರು ಬಟ್ಟೆಗಳನ್ನು ಧರಿಸಿಕೊಳ್ಳಬೇಕು.</verse>
				<verse number="33">ಹೀಗೆ ಅವನು ಮಹಾಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತ ಮಾಡಬೇಕು. ಇದಲ್ಲದೆ ಸಭೆಯ ಗುಡಾರಕ್ಕಾಗಿಯೂ, ಬಲಿಪೀಠಕ್ಕಾಗಿಯೂ ಪ್ರಾಯಶ್ಚಿತ್ತ ಮಾಡಬೇಕು. ಯಾಜಕರಿಗಾಗಿಯೂ, ಸಭೆಯ ಎಲ್ಲಾ ಜನರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು.</verse>
				<verse number="34">“ಹೀಗೆ ಇಸ್ರಾಯೇಲರ ಎಲ್ಲಾ ಪಾಪಗಳಿಗಾಗಿ ವರ್ಷಕ್ಕೊಂದಾವರ್ತಿ ಪ್ರಾಯಶ್ಚಿತ್ತ ಮಾಡುವುದು, ನಿಮಗೆ ನಿರಂತರವಾದ ನಿಯಮವಾಗಿರುವುದು,” ಎಂದು ಹೇಳಿದರು. ಯೆಹೋವ ದೇವರು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು.</verse>
			</chapter>
			<chapter number="17">
				<verse number="1">ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,</verse>
				<verse number="2">“ಆರೋನನಿಗೂ, ಅವನ ಪುತ್ರರಿಗೂ, ಇಸ್ರಾಯೇಲರೆಲ್ಲರಿಗೂ ಮಾತನಾಡಿ ಅವರಿಗೆ ಹೀಗೆ ಹೇಳು: ‘ಯೆಹೋವ ದೇವರು ನಿಮಗೆ ಇಂತೆಂದು ಆಜ್ಞಾಪಿಸುತ್ತಾರೆ. </verse>
				<verse number="3">ಇಸ್ರಾಯೇಲಿನ ಮನೆತನದಲ್ಲಿ ಯಾವನು ಒಂದು ಎತ್ತನ್ನಾಗಲಿ ಇಲ್ಲವೆ ಒಂದು ಕುರಿಯನ್ನಾಗಲಿ ಇಲ್ಲವೆ ಒಂದು ಆಡನ್ನಾಗಲಿ ಪಾಳೆಯದೊಳಗೆ ಆಗಲಿ ಇಲ್ಲವೆ ಪಾಳೆಯದ ಹೊರಗೆ ಆಗಲಿ ವಧಿಸಿ,</verse>
				<verse number="4">ಯೆಹೋವ ದೇವರಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲ ಮುಂದೆ ತಾರದಿದ್ದರೆ, ಆ ಮನುಷ್ಯನ ಮೇಲೆ ರಕ್ತಾಪರಾಧವು ಹೊರಿಸಬೇಕು. ಅವನು ರಕ್ತ ಸುರಿಸಿರುವವನು, ಆ ಮನುಷ್ಯನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು.</verse>
				<verse number="5">ಇಸ್ರಾಯೇಲರು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಯೆಹೋವ ದೇವರಿಗೆ ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಯೆಹೋವ ದೇವರಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು.</verse>
				<verse number="6">ಯಾಜಕನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಬಲಿಪೀಠದ ಮೇಲೆ ರಕ್ತವನ್ನು ಚಿಮುಕಿಸಬೇಕು. ಕೊಬ್ಬನ್ನು ಯೆಹೋವ ದೇವರಿಗೆ ಆಹ್ಲಾದಕರ ಸುಗಂಧ ವಾಸನೆಯಾಗಿ ಸುಡಬೇಕು.</verse>
				<verse number="7">ಜಾರತ್ವ ಮಾಡುವಂತೆ ಅವರು ಇದುವರೆಗೆ ಪೂಜಿಸುತ್ತಿದ್ದ ಆ ಮೇಕೆ ದೇವತೆಗಳಿಗೆ ಇನ್ನೆಂದಿಗೂ ತಮ್ಮ ಯಜ್ಞಗಳನ್ನು ಸಮರ್ಪಿಸಬಾರದು. ಇದು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾದ ನಿಯಮ.’</verse>
				<verse number="8">“ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಇಸ್ರಾಯೇಲಿನ ಮನೆತನದವರಲ್ಲಿ ಯಾವ ಮನುಷ್ಯನಾದರು ಇಲ್ಲವೆ ನಿಮ್ಮೊಳಗೆ ಪ್ರವಾಸಿಗರಾಗಿದ್ದ ಪರಕೀಯರು ದಹನಬಲಿಯನ್ನಾಗಲಿ, ಯಜ್ಞವನ್ನಾಗಲಿ ಅರ್ಪಿಸಿದರೆ,</verse>
				<verse number="9">ಅದನ್ನು ಯೆಹೋವ ದೇವರಿಗೆ ಸಮರ್ಪಿಸುವಂತೆ ದೇವದರ್ಶನದ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ, ಆ ಮನುಷ್ಯನನ್ನು ತನ್ನ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು.</verse>
				<verse number="10">“ ‘ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ, ಯಾವುದೇ ತರದ ರಕ್ತವನ್ನು ತಿಂದರೆ, ರಕ್ತವನ್ನು ತಿನ್ನುವ ಆ ಪ್ರಾಣಕ್ಕೆ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.</verse>
				<verse number="11">ಏಕೆಂದರೆ ದೇಹದ ಜೀವವು ರಕ್ತದೊಳಗೆ ಇರುತ್ತದೆ ಮತ್ತು ನಾನು ಅದನ್ನು ನಿಮ್ಮ ಆತ್ಮಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಬಲಿಪೀಠದ ಮೇಲೆ ನಿಮಗೆ ಕೊಟ್ಟಿದ್ದೇನೆ. ಪ್ರಾಣಕ್ಕೆ ಪ್ರಾಯಶ್ಚಿತ್ತ ಮಾಡುವುದು ರಕ್ತವೇ.</verse>
				<verse number="12">ಆದಕಾರಣ ನಾನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಿದೆನು, “ನಿಮ್ಮಲ್ಲಿಯಾಗಲಿ, ನಿಮ್ಮ ನಡುವೆ ತಂಗಿರುವ ಪರಕೀಯರಲ್ಲಿಯಾಗಲಿ ಯಾರೂ ರಕ್ತವನ್ನು ಭುಜಿಸಬಾರದು.”</verse>
				<verse number="13">“ ‘ಇದಲ್ಲದೆ ಇಸ್ರಾಯೇಲರು ಯಾವ ಮನುಷ್ಯನಾದರೂ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ ತಿನ್ನುವುದಕ್ಕಾಗಿ ಬೇಟೆಯಾಡಿ, ಯಾವುದೇ ಪಶುವನ್ನಾಗಲಿ ಇಲ್ಲವೆ ಪಕ್ಷಿಯನ್ನಾಗಲಿ ಹಿಡಿದರೆ, ಅದರ ರಕ್ತವನ್ನೆಲ್ಲಾ ಸುರಿದು ಅದನ್ನು ಮಣ್ಣಿನಿಂದ ಮುಚ್ಚಬೇಕು.</verse>
				<verse number="14">ಏಕೆಂದರೆ ಅದು ಎಲ್ಲಾ ಶರೀರಗಳ ಜೀವವಾಗಿದೆ. ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ. ಆದ್ದರಿಂದ ನಾನು ಇಸ್ರಾಯೇಲರಿಗೆ, “ನೀವು ಯಾವ ತರಹದ ರಕ್ತವನ್ನೂ ತಿನ್ನಬಾರದು,” ಎಂದು ಹೇಳಿದ್ದೇನೆ. ಏಕೆಂದರೆ ಎಲ್ಲಾ ಶರೀರಗಳ ಜೀವವೂ ಅದರ ರಕ್ತದಲ್ಲಿಯೇ ಇದೆ. ಅದನ್ನು ತಿನ್ನುವ ಯಾವನನ್ನಾದರೂ ಬಹಿಷ್ಕರಿಸಬೇಕು.</verse>
				<verse number="15">“ ‘ಸ್ವದೇಶದವನಾಗಲಿ ಇಲ್ಲವೆ ಪರಕೀಯನಾಗಲಿ ತನ್ನಷ್ಟಕ್ಕೆ ತಾನೇ ಸತ್ತು ಹೋದದ್ದನ್ನು ಇಲ್ಲವೆ ಕಾಡುಮೃಗ ಕೊಂದದ್ದನ್ನು ತಿಂದ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವನು ಅಶುದ್ಧನಾಗಿರಬೇಕು. ತರುವಾಯ ಅವನು ಶುದ್ಧನಾಗಿರುವನು.</verse>
				<verse number="16">ಆದರೆ ಅವನು ಬಟ್ಟೆಗಳನ್ನು ಒಗೆದುಕೊಳ್ಳದೆ ಇದ್ದರೆ, ಇಲ್ಲವೆ ತಾನು ಸ್ನಾನ ಮಾಡದಿದ್ದರೆ, ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳಬೇಕು.’ ”</verse>
			</chapter>
			<chapter number="18">
				<verse number="1">ಯೆಹೋವ ದೇವರು ಮೋಶೆಗೆ,</verse>
				<verse number="2">“ನೀನು ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳಬೇಕು, ‘ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.</verse>
				<verse number="3">ನೀವು ವಾಸವಾಗಿದ್ದ ಈಜಿಪ್ಟ್ ದೇಶದ ಆಚಾರಗಳನ್ನು ಅನುಸರಿಸಬಾರದು. ನಿಮ್ಮನ್ನು ಸೇರಿಸಲಿರುವ ಕಾನಾನ್ ದೇಶದವರ ಆಚಾರಗಳನ್ನು ನೀವು ಮಾಡಬಾರದು. ಇಲ್ಲವೆ ನೀವು ಅವರ ಪದ್ಧತಿಗಳನುಸಾರ ನಡೆಯಬಾರದು.</verse>
				<verse number="4">ನೀವು ನನ್ನ ನಿರ್ಣಯಗಳನ್ನು ಕೈಗೊಂಡು ಕಟ್ಟಳೆಗಳ ಪ್ರಕಾರ ನಡೆಯಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.</verse>
				<verse number="5">ಆದ್ದರಿಂದ ನೀವು ನನ್ನ ನಿಯಮಗಳನ್ನೂ, ನನ್ನ ನಿರ್ಣಯಗಳನ್ನೂ ಕೈಗೊಳ್ಳಿರಿ. ಇವುಗಳನ್ನು ಅನುಸರಿಸುವವರು ನಿಯಮಗಳ ಮೂಲಕವೇ ಬದುಕುವರು, ನಾನೇ ಯೆಹೋವ ದೇವರು.</verse>
				<verse number="6">“ ‘ನಿಮ್ಮಲ್ಲಿ ಯಾವನಾದರೂ ತನ್ನ ಹತ್ತಿರ ಸಂಬಂಧಿಯೊಡನೆ ಲೈಂಗಿಕ ಸಂಬಂಧ ಬೆಳೆಸಬಾರದು, ನಾನೇ ಯೆಹೋವ ದೇವರು.</verse>
				<verse number="7">“ ‘ನಿನ್ನ ತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಿ, ನಿನ್ನ ತಂದೆಯನ್ನು ಅಗೌರವಿಸಬೇಡ. ಆಕೆ ನಿನ್ನ ತಾಯಿ: ಆಕೆಯೊಂದಿಗೆ ಇಂಥ ಸಂಬಂಧ ಬೇಡ.</verse>
				<verse number="8">“ ‘ನಿನ್ನ ಮಲತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನ್ನ ತಂದೆಗೆ ಅಗೌರವವನ್ನುಂಟು ಮಾಡುವುದು.</verse>
				<verse number="9">“ ‘ನಿನ್ನ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ತಂದೆಯ ಮಗಳಾಗಿರಬಹುದು ಇಲ್ಲವೆ ತಾಯಿಯ ಮಗಳಾಗಿರಬಹುದು. ಆಕೆ ಒಂದೇ ಮನೆಯಲ್ಲಿ ಹುಟ್ಟಿರಬಹುದು ಇಲ್ಲವೆ ಬೇರೆ ಕಡೆಯಲ್ಲಿ ಹುಟ್ಟಿರಬಹುದು ಆಕೆಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ.</verse>
				<verse number="10">“ ‘ನಿನ್ನ ಮಗನ ಮಗಳ ಕೂಡ, ಇಲ್ಲವೆ ಮಗಳ ಮಗಳ ಕೂಡ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನಗೆ ಅಗೌರವವಾಗಿದೆ.</verse>
				<verse number="11">“ ‘ನಿನ್ನ ತಂದೆಯಿಂದ ಜನಿಸಿದ ನಿನ್ನ ತಂದೆಯ ಮಗಳೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ಸಹೋದರಿ.</verse>
				<verse number="12">“ ‘ನಿನ್ನ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಆಕೆ ನಿನ್ನ ತಂದೆಯ ಸಮೀಪ ಬಂಧು.</verse>
				<verse number="13">“ ‘ನಿನ್ನ ತಾಯಿಯ ಸಹೋದರಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅವಳು ನಿನ್ನ ತಾಯಿಗೆ ಹತ್ತಿರದ ಸಂಬಂಧಿಯಾಗಿದ್ದಾಳೆ.</verse>
				<verse number="14">“ ‘ನಿನ್ನ ತಂದೆಯ ಸಹೋದರನ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧ ಬೆಳೆಸಬೇಡ. ನಿನ್ನ ತಂದೆಯ ಸಹೋದರನನ್ನು ಅಗೌರವಿಸಬೇಡ. ಆಕೆ ನಿನ್ನ ದೊಡ್ಡಮ್ಮ.</verse>
				<verse number="15">“ ‘ನಿನ್ನ ಸೊಸೆಯೊಂದಿಗೆ ಲೈಂಗಿಕ ಸಂಪರ್ಕ ಬೇಡ. ಆಕೆ ನಿನ್ನ ಮಗನ ಹೆಂಡತಿ. ನೀನು ಅವಳ ಬೆತ್ತಲೆತನವನ್ನು ಕಾಣುವಂತೆ ಮಾಡಬಾರದು.</verse>
				<verse number="16">“ ‘ನೀನು ನಿನ್ನ ಸಹೋದರನ ಹೆಂಡತಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನ್ನ ಸಹೋದರನನ್ನು ಅಗೌರವಿಸುವುದು.</verse>
				<verse number="17">“ ‘ಸ್ತ್ರೀಯೊಂದಿಗೂ, ಆಕೆಯ ಮಗಳೊಂದಿಗೂ ಒಟ್ಟಿಗೆ ಲೈಂಗಿಕ ಸಂಪರ್ಕ ಬೇಡ. ಆಕೆಯ ಮಗನ ಮಗಳೊಂದಿಗಾದರೂ, ಮಗಳ ಮಗಳೊಂದಿಗಾದರೂ ಲೈಂಗಿಕ ಸಂಪರ್ಕ ಬೇಡ. ಅವರು ಆಕೆಯ ಹತ್ತಿರ ಸಂಬಂಧಿಗಳು. ಅದು ದುಷ್ಟತನ.</verse>
				<verse number="18">“ ‘ನಿನ್ನ ಹೆಂಡತಿಗೆ ವೈರಿಯಾಗುವ ಹಾಗೆ ಅವಳ ಸಹೋದರಿಯನ್ನು ಹೆಂಡತಿಯಾಗಿ ತೆಗೆದುಕೊಳ್ಳಬೇಡ. ಒಬ್ಬಳು ಜೀವಂತವಾಗಿರುವಾಗ ಮತ್ತೊಬ್ಬಳೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ.</verse>
				<verse number="19">“ ‘ಮುಟ್ಟಿನಿಂದ ಅಶುದ್ಧಳಾದ ಸ್ತ್ರೀಯ ಸಂಪರ್ಕ ಮಾಡಬೇಡ.</verse>
				<verse number="20">“ ‘ಪರರ ಹೆಂಡತಿಯೊಂದಿಗೆ ನೀನು ಸಂಗಮಿಸಿ ಅಶುದ್ಧನಾಗಬೇಡ.</verse>
				<verse number="21">“ ‘ನಿನ್ನ ಮಕ್ಕಳಲ್ಲಿ ಯಾರನ್ನೂ ಮೋಲೆಕ್ ದೇವತೆಗೆ ಸಮರ್ಪಿಸಿ, ನಿನ್ನ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು. ನಾನು ಯೆಹೋವ ದೇವರು.</verse>
				<verse number="22">“ ‘ಸ್ತ್ರೀಯೊಂದಿಗೆ ಮಲಗಿಕೊಳ್ಳುವಂತೆ ಪುರುಷನೊಂದಿಗೆ ಮಲಗಬಾರದು. ಅದು ಅಸಹ್ಯವಾದದ್ದು.</verse>
				<verse number="23">“ ‘ಇದಲ್ಲದೆ ಪಶುವಿನೊಂದಿಗೆ ನೀನು ಮಲಗಿ ನಿನ್ನನ್ನು ಅಶುದ್ಧಮಾಡಿಕೊಳ್ಳಬಾರದು. ಯಾವ ಸ್ತ್ರೀಯೂ ಸಂಗಮಕ್ಕಾಗಿ ಪಶುವಿನ ಮುಂದೆ ನಿಲ್ಲಬಾರದು. ಅದು ಸ್ವಭಾವಕ್ಕೆ ವ್ಯತಿರಿಕ್ತವಾದದ್ದು.</verse>
				<verse number="24">“ ‘ನೀವು ಈ ಯಾವ ವಿಷಯಗಳಲ್ಲಿಯೂ ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು. ಏಕೆಂದರೆ ನಿಮ್ಮ ಮುಂದೆಯೇ ನಾನು ಹೊರಡಿಸಿಬಿಟ್ಟ ಜನಾಂಗಗಳು ಇವೆಲ್ಲವುಗಳಿಂದ ಹೊಲೆಯಾಗಿವೆ.</verse>
				<verse number="25">ದೇಶವೂ ಅಶುದ್ಧವಾಗಿದೆ. ಆದ್ದರಿಂದ ಅದರ ಮೇಲಿರುವ ಅಕ್ರಮವನ್ನು ನಾನು ದಂಡಿಸುವೆನು. ಆಗ ದೇಶವು ತಾನೇ ತನ್ನೊಳಗಿನ ನಿವಾಸಿಗಳನ್ನು ಕಾರಿಬಿಡುವುದು.</verse>
				<verse number="26">ಆದ್ದರಿಂದ ನೀವು ನನ್ನ ನಿಯಮಗಳನ್ನು, ನನ್ನ ನಿರ್ಣಯಗಳನ್ನು ಕೈಗೊಳ್ಳಬೇಕು. ಸ್ವದೇಶದವರಲ್ಲಿ ಯಾವನಾಗಲಿ ಇಲ್ಲವೆ ನಿಮ್ಮೊಳಗೆ ಪ್ರವಾಸಿಯಾಗಿದ್ದ ಪರಕೀಯನಾಗಲಿ ಈ ಅಸಹ್ಯವಾದವುಗಳಲ್ಲಿ ಒಂದನ್ನೂ ಮಾಡಬಾರದು.</verse>
				<verse number="27">ನಿಮ್ಮೆದುರಿನಲ್ಲಿದ್ದ ಆ ದೇಶದವರು ಈ ಎಲ್ಲಾ ಅಸಹ್ಯವಾದವುಗಳನ್ನು ಮಾಡಿದ್ದರಿಂದ ದೇಶವೂ ಅಶುದ್ಧವಾಯಿತು.</verse>
				<verse number="28">ನೀವೂ ಅದನ್ನು ಅಶುದ್ಧಮಾಡಿದರೆ, ಅದು ನಿಮಗಿಂತ ಮೊದಲಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವುದು.</verse>
				<verse number="29">“ ‘ಏಕೆಂದರೆ ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವುದನ್ನಾದರೂ ಮಾಡಿದರೆ, ಅವನನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.</verse>
				<verse number="30">ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”</verse>
			</chapter>
			<chapter number="19">
				<verse number="1">ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ,</verse>
				<verse number="2">“ಇಸ್ರಾಯೇಲರ ಸಭೆಯವರೆಲ್ಲರ ಸಂಗಡ ಮಾತನಾಡಿ, ಅವರಿಗೆ ಹೀಗೆ ಹೇಳಬೇಕು: ‘ನೀವು ಪರಿಶುದ್ಧರಾಗಿರಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರಾದ ನಾನು ಪರಿಶುದ್ಧನಾಗಿದ್ದೇನೆ.</verse>
				<verse number="3">“ ‘ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತಾಯಿಗೂ ತನ್ನ ತಂದೆಗೂ ಭಯಪಟ್ಟು, ನನ್ನ ವಿಶ್ರಾಂತಿಯ ದಿನಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.</verse>
				<verse number="4">“ ‘ನೀವು ವಿಗ್ರಹಗಳ ಕಡೆಗೆ ತಿರುಗಿಕೊಳ್ಳಬೇಡಿರಿ. ಇಲ್ಲವೆ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.</verse>
				<verse number="5">“ ‘ನೀವು ನಿಮ್ಮ ಯೆಹೋವ ದೇವರಿಗೆ ಸಮಾಧಾನದ ಬಲಿಯನ್ನು ಸಮರ್ಪಿಸುವುದಾದರೆ, ನೀವು ಆತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿಯೇ ಅರ್ಪಿಸಬೇಕು.</verse>
				<verse number="6">ಅದನ್ನು ನೀವು ಸಮರ್ಪಿಸಿದ ದಿನದಲ್ಲಿಯೂ ಮಾರನೆಯ ದಿನದಲ್ಲಿಯೂ ತಿನ್ನಬೇಕು. ಆದರೆ ಅದು ಮೂರನೆಯ ದಿನದವರೆಗೆ ಉಳಿದರೆ ಅದನ್ನು ಬೆಂಕಿಯಲ್ಲಿ ಸುಡಬೇಕು.</verse>
				<verse number="7">ಅದನ್ನು ಮೂರನೆಯ ದಿನದಲ್ಲಿ ತಿಂದದ್ದೇ ಆದರೆ, ಅದು ಅಸಹ್ಯವಾದದ್ದು, ಅದು ಅಂಗೀಕೃತವಾಗುವುದಿಲ್ಲ.</verse>
				<verse number="8">ಆದ್ದರಿಂದ ಅದನ್ನು ತಿನ್ನುವ ಪ್ರತಿಯೊಬ್ಬರೂ ತಮ್ಮ ಅಪರಾಧವನ್ನು ಹೊತ್ತುಕೊಳ್ಳಬೇಕು. ಏಕೆಂದರೆ ಯೆಹೋವ ದೇವರಿಗೆ ಪವಿತ್ರವಾದದ್ದನ್ನು ಅವರು ಅಶುದ್ಧಮಾಡಿದ್ದಾನೆ. ಅಂಥವರನ್ನು ತಮ್ಮ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು.</verse>
				<verse number="9">“ ‘ನೀವು ನಿಮ್ಮ ಭೂಮಿಯ ಪೈರನ್ನು ಕೊಯ್ಯುವಾಗ, ನಿಮ್ಮ ಹೊಲದ ಮೂಲೆಗಳಲ್ಲಿ ಸಂಪೂರ್ಣವಾಗಿ ಕೊಯ್ಯಬಾರದು. ಇಲ್ಲವೆ ನಿಮ್ಮ ಸುಗ್ಗಿಯ ಹಕ್ಕಲುಗಳನ್ನು ಕೂಡಿಸಬಾರದು.</verse>
				<verse number="10">ನಿಮ್ಮ ದ್ರಾಕ್ಷಿತೋಟದಲ್ಲಿ ಹಕ್ಕಲಾಯಬಾರದು. ಇಲ್ಲವೆ ಪ್ರತಿಯೊಂದು ದ್ರಾಕ್ಷಿಯನ್ನೂ ಕೂಡಿಸಬಾರದು. ನೀವು ಅವುಗಳನ್ನು ಬಡವರಿಗಾಗಿಯೂ ಪರಕೀಯರಿಗಾಗಿಯೂ ಬಿಟ್ಟುಬಿಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.</verse>
				<verse number="11">“ ‘ಕದಿಯಬಾರದು. “ ‘ಸುಳ್ಳಾಡಬಾರದು. “ ‘ಒಬ್ಬರಿಗೊಬ್ಬರು ಮೋಸಮಾಡಬಾರದು.</verse>
				<verse number="12">“ ‘ನನ್ನ ಹೆಸರಿನಲ್ಲಿ ಸುಳ್ಳು ಪ್ರಮಾಣ ಮಾಡಬಾರದು. ನಿಮ್ಮ ದೇವರ ಹೆಸರನ್ನು ಅಗೌರವಿಸಬಾರದು. ನಾನೇ ಯೆಹೋವ ದೇವರು.</verse>
				<verse number="13">“ ‘ನಿಮ್ಮ ನೆರೆಯವನನ್ನು ವಂಚಿಸಬಾರದು. “ ‘ಇಲ್ಲವೆ ಅವನನ್ನು ಸುಲಿದುಕೊಳ್ಳಬಾರದು. ಕೂಲಿಯಾಳಿನ ಕೂಲಿಯು ನಿಮ್ಮ ಬಳಿಯಲ್ಲಿ ರಾತ್ರಿಯೆಲ್ಲಾ ಮತ್ತು ಮುಂಜಾನೆಯವರೆಗೆ ಇರಬಾರದು.</verse>
				<verse number="14">“ ‘ಕಿವುಡನನ್ನು ಶಪಿಸಬಾರದು. ಇಲ್ಲವೆ ಕಣ್ಣು ಕಾಣದವನನ್ನು ಮುಗ್ಗರಿಸುವಂತೆ ಮಾಡಬಾರದು. ನಿಮ್ಮ ದೇವರಿಗೆ ಭಯಪಡಬೇಕು. ನಾನೇ ಯೆಹೋವ ದೇವರು.</verse>
				<verse number="15">“ ‘ವ್ಯಾಜ್ಯ ತೀರಿಸುವಾಗ ನೀನು ಅನ್ಯಾಯ ಮಾಡದಿರು. ಬಡವನ ಮುಖ ದಾಕ್ಷಿಣ್ಯವನ್ನಾಗಲಿ, ಬಲಿಷ್ಠನ ಘನತೆಯನ್ನಾಗಲಿ ಲಕ್ಷಿಸದೆ ನಿಷ್ಪಕ್ಷಪಾತವಾಗಿ ತೀರ್ಪುಕೊಡು. ನಿನ್ನ ನೆರೆಯವನಿಗೆ ನೀತಿಯಲ್ಲಿ ನ್ಯಾಯವಾಗಿ ತೀರ್ಪುಮಾಡು.</verse>
				<verse number="16">“ ‘ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ. “ ‘ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ. ನಾನೇ ಯೆಹೋವ ದೇವರು.</verse>
				<verse number="17">“ ‘ನಿನ್ನ ಹೃದಯದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ, ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.</verse>
				<verse number="18">“ ‘ನಿನ್ನ ಜನರ ಮಕ್ಕಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸದವನಾಗಿಯೂ, ಸೇಡು ತೀರಿಸದೆಯೂ ಇರು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು. ನಾನೇ ಯೆಹೋವ ದೇವರು.</verse>
				<verse number="19">“ ‘ನೀನು ನನ್ನ ಆಜ್ಞೆಗಳನ್ನು ಕೈಗೊಳ್ಳಬೇಕು. “ ‘ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ. “ ‘ನಿನ್ನ ಹೊಲದಲ್ಲಿ ಮಿಶ್ರವಾದ ಬೀಜಗಳನ್ನು ಬಿತ್ತಬೇಡ. “ ‘ಇದಲ್ಲದೆ ನಾರು ಮತ್ತು ಉಣ್ಣೆ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು.</verse>
				<verse number="20">“ ‘ಒಬ್ಬ ಪುರುಷನಿಗೆ ನಿಶ್ಚಿತವಾಗಿರುವ ದಾಸಿಯಾದ ಒಬ್ಬ ಸ್ತ್ರೀಯೊಂದಿಗೆ ಒಬ್ಬ ಮನುಷ್ಯನು ಸಂಗಮಿಸುವುದಕ್ಕಾಗಿ ಮಲಗಿದರೆ ಅವಳು ಬಿಡುಗಡೆಯನ್ನು ಹೊಂದಿರದಿದ್ದರೆ, ಇಲ್ಲವೆ ಅವಳಿಗೆ ಸ್ವಾತಂತ್ರ್ಯವನ್ನು ಕೊಡದಿರದಿದ್ದರೆ, ತಕ್ಕ ಶಿಕ್ಷೆಯಾಗಬೇಕು. ಅವಳು ಸ್ವತಂತ್ರಳಲ್ಲದ ಕಾರಣ ಅವಳಿಗೆ ಮರಣದಂಡನೆಯನ್ನು ವಿಧಿಸಬಾರದು.</verse>
				<verse number="21">ಅವನು ಪ್ರಾಯಶ್ಚಿತ್ತ ಬಲಿಯ ಟಗರಾದ ತನ್ನ ಪ್ರಾಯಶ್ಚಿತ್ತ ಬಲಿಯನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಎದುರಿನಲ್ಲಿ ತರಬೇಕು.</verse>
				<verse number="22">ಅವನು ಮಾಡಿದ ಪಾಪಕ್ಕಾಗಿ ಪ್ರಾಯಶ್ಚಿತ್ತ ಬಲಿಯಾಗಿರುವ ಟಗರಿನಿಂದ ಯಾಜಕನು ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು. ಆಗ ಅವನು ಮಾಡಿದ ಪಾಪವನ್ನು ಅವನಿಗೆ ಕ್ಷಮಿಸಲಾಗುವುದು.</verse>
				<verse number="23">“ ‘ನೀವು ದೇಶದೊಳಗೆ ಬಂದು ಎಲ್ಲಾ ತರಹದ ಮರಗಳನ್ನು ಆಹಾರಕ್ಕೋಸ್ಕರ ನೆಟ್ಟಾಗ, ಅದರ ಫಲವನ್ನು ಮೂರು ವರುಷಗಳವರೆಗೆ ಅಶುದ್ಧವೆಂದೆಣಿಸಿ ಅದನ್ನು ತಿನ್ನಬಾರದು.</verse>
				<verse number="24">ಆದರೆ ನಾಲ್ಕನೆಯ ವರುಷದಲ್ಲಿ ಅದರ ಎಲ್ಲಾ ಫಲವು ಯೆಹೋವ ದೇವರ ಸ್ತೋತ್ರಕ್ಕಾಗಿ ಪರಿಶುದ್ಧವಾಗಿರುವುದು.</verse>
				<verse number="25">ಐದನೆಯ ವರುಷದಲ್ಲಿ ಅದರ ಫಲವನ್ನು ನೀವು ತಿನ್ನಬೇಕು. ಆಗ ಅದು ನಿಮಗೆ ಇನ್ನೂ ಸಮೃದ್ಧಿಯಾಗಿ ಫಲಿಸುವುದು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.</verse>
				<verse number="26">“ ‘ರಕ್ತದೊಂದಿಗೆ ಯಾವುದನ್ನೂ ನೀವು ತಿನ್ನಬಾರದು. “ ‘ಇದಲ್ಲದೆ ಮಂತ್ರವನ್ನು ಮಾಡಬಾರದು. ಇಲ್ಲವೆ ಶಕುನಗಳನ್ನು ನೋಡಬಾರದು.</verse>
				<verse number="27">“ ‘ನಿಮ್ಮ ತಲೆಯ ಮೂಲೆಗಳನ್ನು ದುಂಡಗೆ ಕತ್ತರಿಸಬಾರದು. ಇದಲ್ಲದೆ ನಿಮ್ಮ ಗಡ್ಡದ ಮೂಲೆಯನ್ನು ಕೆಡಿಸಬಾರದು.</verse>
				<verse number="28">“ ‘ಸತ್ತವರಿಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು. ನಿಮ್ಮ ಮೇಲೆ ಯಾವ ಹಚ್ಚೆಗಳನ್ನೂ ಹಚ್ಚಿಸಿಕೊಳ್ಳಬಾರದು. ನಾನೇ ಯೆಹೋವ ದೇವರು.</verse>
				<verse number="29">“ ‘ನಿನ್ನ ಮಗಳು ವೇಶ್ಯೆಯಾಗುವಂತೆ ವ್ಯಭಿಚಾರಕ್ಕೆ ಬಿಡಬಾರದು. ಹಾಗೆ ಮಾಡಿದರೆ, ದೇಶವು ವೇಶ್ಯೆತನಕ್ಕೆ ಒಳಪಡುವುದು ಮತ್ತು ಕೆಟ್ಟತನದಿಂದ ತುಂಬಿಹೋಗುವುದು.</verse>
				<verse number="30">“ ‘ನನ್ನ ವಿಶ್ರಾಂತಿಯ ದಿನಗಳನ್ನು ನೀವು ಆಚರಿಸಬೇಕು. ನನ್ನ ಪರಿಶುದ್ಧಸ್ಥಳದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನೇ ಯೆಹೋವ ದೇವರು.</verse>
				<verse number="31">“ ‘ಮಾಟಗಾರರನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಅಶುದ್ಧವಾಗದಂತೆ ಭೂತಪ್ರೇತಗಳನ್ನು ವಿಚಾರಿಸುವವರನ್ನು ಅನುಸರಿಸಬೇಡ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.</verse>
				<verse number="32">“ ‘ತಲೆ ನೆರೆತ ವೃದ್ಧರ ಮುಂದೆ ಎದ್ದು ನಿಂತುಕೊಳ್ಳಬೇಕು, ಅವರ ಸಮ್ಮುಖವನ್ನು ಗೌರವಿಸು. ನಿನ್ನ ದೇವರಿಗೆ ಭಯಪಡಬೇಕು. ನಾನೇ ಯೆಹೋವ ದೇವರು.</verse>
				<verse number="33">“ ‘ಒಬ್ಬ ಪರಕೀಯನು ನಿಮ್ಮ ದೇಶದಲ್ಲಿ ನಿನ್ನೊಂದಿಗೆ ಪ್ರವಾಸಿಯಾಗಿದ್ದರೆ, ಅವನನ್ನು ಉಪದ್ರವ ಪಡಿಸಬೇಡಿರಿ.</verse>
				<verse number="34">ಆದರೆ ನಿಮ್ಮಲ್ಲಿ ವಾಸವಾಗಿರುವ ಪರಕೀಯನು ನಿಮ್ಮೊಳಗೇ ಸ್ವದೇಶದವನಂತಿರಲಿ. ನೀವು ಅವನನ್ನು ನಿಮ್ಮಂತೆಯೇ ಪ್ರೀತಿಸಬೇಕು. ಏಕೆಂದರೆ ನೀವು ಸಹ ಈಜಿಪ್ಟ್ ದೇಶದಲ್ಲಿ ಪರಕೀಯರಾಗಿದ್ದಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.</verse>
				<verse number="35">“ ‘ನಿಮ್ಮ ನಿರ್ಣಯದಲ್ಲಿಯೂ, ಅಳೆಯುವುದರಲ್ಲಿಯೂ, ತೂಕದಲ್ಲಿಯೂ, ಅಳತೆಯಲ್ಲಿಯೂ ನೀವು ಅನ್ಯಾಯ ಮಾಡಬೇಡಿರಿ.</verse>
				<verse number="36">ತಕ್ಕಡಿ, ತೂಕದ ಕಲ್ಲುಗಳು, ಕಿಲೋಗ್ರಾಂ ಮತ್ತು ಲೀಟರ್ ನ್ಯಾಯಯುತವಾಗಿರಲಿ. ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಯೆಹೋವ ದೇವರು ನಾನೇ.</verse>
				<verse number="37">“ ‘ಆದ್ದರಿಂದ ನನ್ನ ಎಲ್ಲಾ ಆಜ್ಞೆಗಳನ್ನೂ, ನನ್ನ ಎಲ್ಲಾ ನ್ಯಾಯಗಳನ್ನೂ ನೀವು ಅನುಸರಿಸಿ ನಡೆಯಬೇಕು. ನಾನೇ ಯೆಹೋವ ದೇವರು,’ ” ಎಂದು ಹೇಳಿದರು.</verse>
			</chapter>
			<chapter number="20">
				<verse number="1">ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="2">“ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು: ‘ಇಸ್ರಾಯೇಲರಲ್ಲಿಯಾಗಲಿ, ಇಸ್ರಾಯೇಲಿನಲ್ಲಿ ಪ್ರವಾಸಿಯಾದ ಪರಕೀಯರಲ್ಲಿಯಾಗಲಿ ಯಾವನಾದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ, ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು. ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.</verse>
				<verse number="3">ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. ಏಕೆಂದರೆ ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಅಶುದ್ಧಮಾಡುವಂತೆ ತನ್ನ ಮಕ್ಕಳನ್ನು ಮೋಲೆಕನಿಗೆ ಕೊಟ್ಟಿದ್ದಾನೆ.</verse>
				<verse number="4">ಆ ಮನುಷ್ಯನು ತನ್ನ ಸಂತತಿಯನ್ನು ಮೋಲೆಕನಿಗೆ ಕೊಡುವಾಗ, ಜನರು ತಮ್ಮ ಕಣ್ಣುಗಳನ್ನು ಮರೆಮಾಡಿ, ಅವನನ್ನು ಕೊಲ್ಲದೆ ಹೋದರೆ,</verse>
				<verse number="5">ಆಗ ನಾನು ಆ ಮನುಷ್ಯನಿಗೂ, ಅವನ ಕುಟುಂಬಕ್ಕೂ ವಿರೋಧವಾಗಿಯೂ, ವಿಮುಖವಾಗಿಯೂ ಇರುವೆನು. ಮೋಲೆಕನನ್ನು ಪೂಜೆ ಮಾಡಿದ್ದಕ್ಕಾಗಿ ಅವನನ್ನೂ, ದೇವದ್ರೋಹಿಗಳಾಗಿ ಅವನನ್ನು ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.</verse>
				<verse number="6">“ ‘ಇದಲ್ಲದೆ ಮಾಟಗಾರರನ್ನು ಮತ್ತು ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಅಂಥ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.</verse>
				<verse number="7">“ ‘ಆದ್ದರಿಂದ ನೀವು ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ ಮತ್ತು ಪರಿಶುದ್ಧರಾಗಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.</verse>
				<verse number="8">ಇದಲ್ಲದೆ ನೀವು ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳನ್ನು ಪಾಲಿಸಬೇಕು. ನಿಮ್ಮನ್ನು ಶುದ್ಧಪಡಿಸುವ ಯೆಹೋವ ದೇವರು ನಾನೇ.</verse>
				<verse number="9">“ ‘ತನ್ನ ತಂದೆಯಾನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವವರಿಗೆ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಯಾರು ತನ್ನ ತಂದೆಯಾನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವರೋ, ಅವರ ಪಾಪವು ಸ್ವಯಂಕೃತವಾದುದು.</verse>
				<verse number="10">“ ‘ಇದಲ್ಲದೆ ಒಬ್ಬನು ಮತ್ತೊಬ್ಬನ ಹೆಂಡತಿಯೊಡನೆ ವ್ಯಭಿಚಾರ ಮಾಡಿದರೆ, ವ್ಯಭಿಚಾರ ಮಾಡುವವನಿಗೂ ಮತ್ತು ವ್ಯಭಿಚಾರ ಮಾಡುವವಳಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು.</verse>
				<verse number="11">“ ‘ತನ್ನ ತಂದೆಯ ಹೆಂಡತಿಯೊಡನೆ ಸಂಗಮಿಸುವವನು ತನ್ನ ತಂದೆಗೆ ಮಾನಭಂಗ ಮಾಡಿದಂತೆ. ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಅವರ ರಕ್ತವು ಅವರ ಮೇಲೆ ಇರುವುದು.</verse>
				<verse number="12">“ ‘ಒಬ್ಬನು ತನ್ನ ಸೊಸೆಯೊಂದಿಗೆ ಸಂಗಮಿಸಿದರೆ, ಅವರಿಬ್ಬರಿಗೂ ನಿಶ್ಚಯವಾಗಿ ಮರಣದಂಡನೆ ವಿಧಿಸಬೇಕು. ಅವರು ವಿಕೃತವನ್ನು ಮಾಡಿದ್ದಾರೆ, ಅವರ ಪಾಪವು ಅವರ ಮೇಲೆ ಇರುವುದು.</verse>
				<verse number="13">“ ‘ಒಬ್ಬ ಮನುಷ್ಯನು ಸ್ತ್ರೀಯೊಂದಿಗೆ ಮಲಗುವಂತೆ ಮತ್ತೊಬ್ಬ ಮನುಷ್ಯನೊಂದಿಗೆ ಮಲಗಿದರೆ, ಅವರಿಬ್ಬರೂ ಅಸಹ್ಯವಾದದ್ದನ್ನು ಮಾಡಿದವರಾಗಿದ್ದಾರೆ. ಅವರಿಗೆ ನಿಶ್ಚಯವಾಗಿಯೂ ಮರಣದಂಡನೆ ವಿಧಿಸಬೇಕು. ಅವರ ರಕ್ತವು ಅವರ ಮೇಲೆ ಇರುವುದು.</verse>
				<verse number="14">“ ‘ಒಬ್ಬ ಮನುಷ್ಯನು ಒಬ್ಬ ಸ್ತ್ರೀಯನ್ನೂ, ಅವಳ ತಾಯಿಯನ್ನೂ ಮದುವೆ ಮಾಡಿಕೊಂಡರೆ ಅದು ದುಷ್ಟತನವಾಗಿದೆ. ಆದ್ದರಿಂದ ನಿಮ್ಮಲ್ಲಿ ದುಷ್ಟತನವು ಇರದಂತೆ ಆ ಮೂರು ಜನರನ್ನು ಬೆಂಕಿಯಿಂದ ಸುಡಿಸಿಬಿಡಬೇಕು.</verse>
				<verse number="15">“ ‘ಒಬ್ಬನು ಪಶುವಿನೊಂದಿಗೆ ಸಂಗಮಿಸಿದರೆ ಅವನಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು ಮತ್ತು ನೀವು ಆ ಪಶುವನ್ನು ವಧಿಸಬೇಕು.</verse>
				<verse number="16">“ ‘ಇದಲ್ಲದೆ ಒಬ್ಬ ಸ್ತ್ರೀಯು ಒಂದು ಪಶುವಿನೊಂದಿಗೆ ಸಂಗಮಿಸುವುದಕ್ಕಾಗಿ ಮಲಗಿಕೊಂಡರೆ, ನೀವು ಆ ಸ್ತ್ರೀಯನ್ನೂ, ಆ ಪಶುವನ್ನೂ ಕೊಲ್ಲಬೇಕು. ಅವರಿಗೆ ನಿಶ್ಚಯವಾಗಿ ಮರಣದಂಡನೆಯಾಗಬೇಕು. ಅವರ ಪಾಪವು ಅವರ ಮೇಲೆ ಇರುವುದು.</verse>
				<verse number="17">“ ‘ಒಬ್ಬನು ತನ್ನ ತಂದೆಯ ಇಲ್ಲವೆ ತನ್ನ ತಾಯಿಯ ಮಗಳಾದ ತನ್ನ ಸಹೋದರಿಯ ಬೆತ್ತಲೆತನವನ್ನು ನೋಡಿದರೆ, ಇಲ್ಲವೆ ಅವಳು ಅವನ ಬೆತ್ತಲೆತನವನ್ನು ನೋಡಿದರೆ ಅದು ದುಷ್ಟತನವೇ. ಅವರನ್ನು ತಮ್ಮ ಜನರ ಮಧ್ಯದಿಂದ ತೆಗೆದುಹಾಕಬೇಕು. ಅವರ ರಕ್ತವು ಅವರ ಮೇಲೆ ಇರುವುದು. ಅವನು ತನ್ನ ಸಹೋದರಿಯನ್ನು ಸಂಗಮಿಸಿದ್ದರಿಂದ ತನ್ನ ಅಪರಾಧವನ್ನು ತಾನೇ ಹೊತ್ತುಕೊಳ್ಳುವನು.</verse>
				<verse number="18">“ ‘ಒಬ್ಬ ಮನುಷ್ಯನು ಮುಟ್ಟಾದ ಸ್ತ್ರೀಯೊಂದಿಗೆ ಮಲಗಿ, ಆಕೆಯೊಂದಿಗೆ ಲೈಂಗಿಕ ಸಂಪರ್ಕ ಮಾಡಿದರೆ, ಅವನು ಆಕೆಯ ಮುಟ್ಟಿನ ಮೂಲವನ್ನು ಬಹಿರಂಗಪಡಿಸಿದ್ದಾನೆ. ಆಕೆ ಅದನ್ನು ಬಹಿರಂಗಪಡಿಸಿದ್ದಾಳೆ. ಅವರಿಬ್ಬರನ್ನೂ ಸ್ವಜನರಿಂದ ಬಹಿಷ್ಕರಿಸಬೇಕು.</verse>
				<verse number="19">“ ‘ನೀನು ನಿನ್ನ ತಾಯಿಯ ಸಹೋದರಿ ಇಲ್ಲವೆ ತಂದೆಯ ಸಹೋದರಿಯೊಂದಿಗೆ ಲೈಂಗಿಕ ಸಂಪರ್ಕ ಮಾಡಬೇಡ. ಅದು ಸಮೀಪ ಬಂಧುವನ್ನು ಅಗೌರವಿಸಿದ ಹಾಗೆ ಅದಕ್ಕೆ ನೀವಿಬ್ಬರೂ ಜವಾಬ್ದಾರರು.</verse>
				<verse number="20">“ ‘ಒಬ್ಬನು ತನ್ನ ಚಿಕ್ಕಪ್ಪನ ಹೆಂಡತಿಯೊಂದಿಗೆ ಸಂಗಮಿಸಿದರೆ, ಅವನು ತನ್ನ ಚಿಕ್ಕಪ್ಪನನ್ನು ಅಗೌರವಿಸಿದಂತೆ. ಅವರು ತಮ್ಮ ಪಾಪವನ್ನು ಹೊತ್ತುಕೊಳ್ಳಬೇಕು. ಅವರು ಮಕ್ಕಳಿಲ್ಲದೆ ಸಾಯುವರು.</verse>
				<verse number="21">“ ‘ಒಬ್ಬನು ತನ್ನ ಸಹೋದರನ ಹೆಂಡತಿಯನ್ನು ತೆಗೆದುಕೊಂಡರೆ, ಅದು ಅಶುದ್ಧವಾದದ್ದು. ಏಕೆಂದರೆ ಅವನು ತನ್ನ ಸಹೋದರನನ್ನು ಅಗೌರವಿಸಿದ್ದಾನೆ. ಅವರು ಮಕ್ಕಳಿಲ್ಲದವರಾಗುವರು.</verse>
				<verse number="22">“ ‘ನೀವು ನನ್ನ ಎಲ್ಲಾ ನಿಯಮಗಳನ್ನೂ, ನನ್ನ ಎಲ್ಲಾ ನ್ಯಾಯಗಳನ್ನೂ ಕೈಗೊಂಡು ಪಾಲಿಸಬೇಕು. ಹೀಗಿದ್ದರೆ ನೀವು ವಾಸಿಸುವುದಕ್ಕೆ ನಾನು ನಿಮ್ಮನ್ನು ತರುವ ಆ ದೇಶವು ನಿಮ್ಮನ್ನು ಕಾರಿಬಿಡುವುದಿಲ್ಲ.</verse>
				<verse number="23">ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು. ಏಕೆಂದರೆ ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ. ಆದಕಾರಣ ನಾನು ಅವರನ್ನು ಕಂಡು ಅಸಹ್ಯಗೊಂಡಿದ್ದೇನೆ.</verse>
				<verse number="24">ಆದರೆ, “ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ.” ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.</verse>
				<verse number="25">“ ‘ಆದ್ದರಿಂದ ನೀವು ಶುದ್ಧವಾದ ಮತ್ತು ಅಶುದ್ಧವಾದ ಪಶುಗಳ ಮಧ್ಯದಲ್ಲಿಯೂ, ಅಶುದ್ಧವಾದ ಮತ್ತು ಶುದ್ಧವಾದ ಪಕ್ಷಿಗಳ ಮಧ್ಯದಲ್ಲಿಯೂ ವ್ಯತ್ಯಾಸ ಮಾಡಬೇಕು. ಇದಲ್ಲದೆ ನಾನು ನಿಮ್ಮಿಂದ ಪ್ರತ್ಯೇಕಿಸಿದ ಅಶುದ್ಧವಾದ ಪಶುಗಳಿಂದಲೂ ಇಲ್ಲವೆ ಪಕ್ಷಿಗಳಿಂದಲೂ ಇಲ್ಲವೆ ಭೂಮಿಯ ಮೇಲೆ ಚಲಿಸುವ ಯಾವ ತರವಾದ ಜೀವಿಯಿಂದಲೂ ನೀವು ನಿಮ್ಮ ಪ್ರಾಣಗಳನ್ನು ಅಶುದ್ಧಮಾಡಿಕೊಳ್ಳಬಾರದು.</verse>
				<verse number="26">ನೀವು ನನ್ನವರಾಗಿರುವಂತೆ ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಿಸಿದ ಯೆಹೋವ ದೇವರಾದ ನಾನು ಪರಿಶುದ್ಧನಾಗಿರುವುದರಿಂದ, ನೀವು ನನಗೆ ಪರಿಶುದ್ಧರಾಗಿರಬೇಕು.</verse>
				<verse number="27">“ ‘ಪುರುಷನಾಗಲಿ, ಸ್ತ್ರೀಯಾಗಲಿ ಮಾಟಗಾರರಾಗಿದ್ದರೆ ಇಲ್ಲವೆ ಭೂತಪ್ರೇತಗಳನ್ನು ವಿಚಾರಿಸುವವರಾಗಿದ್ದರೆ, ಅವರನ್ನು ನಿಶ್ಚಯವಾಗಿ ಕೊಲ್ಲಬೇಕು. ಅವರ ಪಾಪವು ಅವರ ಮೇಲೆ ಇರುವುದು.’ ”</verse>
			</chapter>
			<chapter number="21">
				<verse number="1">ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ, ಅವರಿಗೆ ಹೀಗೆ ಹೇಳು: ಸತ್ತವರ ದೇಹವನ್ನು ಮುಟ್ಟುವುದರಿಂದ ಯಾವ ಯಾಜಕನೂ ಅಪವಿತ್ರನಾಗಬಾರದು.</verse>
				<verse number="2">ಆದರೆ ತನ್ನ ಹತ್ತಿರದ ಸಂಬಂಧಿಯಾಗಿ, ಅಂದರೆ ಅವನ ತಾಯಿಯಾಗಿ, ತಂದೆಯಾಗಿ, ಅವನ ಮಗನಿಗಾಗಿ, ಅವನ ಮಗಳಿಗಾಗಿ, ಅವನ ಸಹೋದರನಿಗಾಗಿ,</verse>
				<verse number="3">ಅವನಿಗೆ ಹತ್ತಿರದ ಗಂಡನಿಲ್ಲದ ಕನ್ನಿಕೆಯಾದ ಸಹೋದರಿಗಾಗಿ ಹೊರತು,</verse>
				<verse number="4">ಅವನು ತನ್ನ ಜನರೊಳಗೆ ಮುಖ್ಯಸ್ಥನಾಗಿರುವುದರಿಂದ ತನ್ನನ್ನು ತಾನು ಅಪವಿತ್ರವಾಗಬಾರದು.</verse>
				<verse number="5">“ ‘ಅವರು ತಮ್ಮ ತಲೆಯನ್ನು ಬೋಳಿಸಿಕೊಳ್ಳಬಾರದು. ಅಲ್ಲದೆ ತಮ್ಮ ಗಡ್ಡದ ಮೂಲೆಯನ್ನು ಬೋಳಿಸಿಕೊಳ್ಳಬಾರದು. ದೇಹವನ್ನು ಗಾಯಮಾಡಿಕೊಳ್ಳಬಾರದು.</verse>
				<verse number="6">ಅವರು ತಮ್ಮ ಯೆಹೋವ ದೇವರಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವುದರಿಂದ, ಅವರು ತಮ್ಮ ದೇವರ ಹೆಸರನ್ನು ಅಗೌರವಪಡಿಸದೆ, ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು. ಆದಕಾರಣ ಅವರು ಪರಿಶುದ್ಧರಾಗಿರುವರು.</verse>
				<verse number="7">“ ‘ಯಾಜಕರು ತಮ್ಮ ದೇವರಿಗೆ ಪರಿಶುದ್ಧರಾಗಿರುವುದರಿಂದ ವೇಶ್ಯೆಯನ್ನಾಗಲಿ, ಶೀಲಭ್ರಷ್ಠ ಸ್ತ್ರೀಯನ್ನಾಗಲಿ, ಗಂಡನಿಂದ ವಿಚ್ಛೇದನ ಪಡೆದವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.</verse>
				<verse number="8">ಅವರನ್ನು ಪರಿಶುದ್ಧರೆಣಿಸಿ, ಏಕೆಂದರೆ ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀನು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವ ದೇವರೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀನು ಭಾವಿಸಬೇಕು.</verse>
				<verse number="9">“ ‘ಯಾವುದೇ ಯಾಜಕನ ಮಗಳು ವ್ಯಭಿಚಾರ ಕೃತ್ಯದಿಂದ ತನ್ನನ್ನು ಅಪವಿತ್ರ ಮಾಡಿಕೊಂಡರೆ, ಅವಳು ತನ್ನ ತಂದೆಯನ್ನು ಅಗೌರವಿಸಿದ್ದಾಳೆ. ಅವಳನ್ನು ಬೆಂಕಿಯಿಂದ ಸುಡಬೇಕು.</verse>
				<verse number="10">“ ‘ತನ್ನ ಸಹೋದರರೊಳಗೆ ಮಹಾಯಾಜಕನಾಗಿದ್ದು, ಯಾವನು ತೈಲಾಭಿಷೇಕ ಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ, ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು, ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು.</verse>
				<verse number="11">ಯಾವ ಮೃತ ಶರೀರದ ಬಳಿಗೂ ಹೋಗಬಾರದು, ಅವನು ತನ್ನ ತಂದೆತಾಯಿಗಳ ಮರಣದ ನಿಮಿತ್ತ, ತನ್ನನ್ನು ಅಶುದ್ಧಮಾಡಿಕೊಳ್ಳಬಾರದು.</verse>
				<verse number="12">ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ಮತ್ತು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು. ಏಕೆಂದರೆ ತನ್ನ ದೇವರ ಅಭಿಷೇಕ ತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನೆ. ನಾನೇ ಯೆಹೋವ ದೇವರು.</verse>
				<verse number="13">“ ‘ಅವನು ಪುರುಷ ಸಂಪರ್ಕವೇ ಇಲ್ಲದ ಯುವತಿಯನ್ನು ಮದುವೆ ಮಾಡಿಕೊಳ್ಳಬೇಕೇ ಹೊರತು</verse>
				<verse number="14">ವಿಧವೆಯನ್ನಾಗಲಿ, ಗಂಡ ಬಿಟ್ಟ ಸ್ತ್ರೀಯನ್ನಾಗಲಿ, ಇಲ್ಲವೆ ಅಪವಿತ್ರಳನ್ನಾಗಲಿ, ವೇಶ್ಯೆಯನ್ನಾಗಲಿ, ಇಂಥವರನ್ನು ಅವನು ಮದುವೆಯಾಗಬಾರದು. ಆದರೆ ತನ್ನ ಸ್ವಂತ ಜನರಲ್ಲಿ ಒಬ್ಬ ಕನ್ನಿಕೆಯನ್ನು ತನಗೆ ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು.</verse>
				<verse number="15">ಇದಲ್ಲದೆ ಅವನು ತನ್ನ ಜನರೊಳಗೆ ತನ್ನ ಸಂತತಿಯನ್ನು ಅಪವಿತ್ರ ಮಾಡಬಾರದು. ಏಕೆಂದರೆ ಯೆಹೋವ ದೇವರಾದ ನಾನು ಅವನನ್ನು ಶುದ್ಧೀಕರಿಸುತ್ತೇನೆ.’ ”</verse>
				<verse number="16">ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="17">“ಆರೋನನೊಂದಿಗೆ ಮಾತನಾಡಿ ಹೀಗೆ ಹೇಳು: ‘ನಿನ್ನ ಸಂತತಿಯ ವಂಶಾವಳಿಗಳಲ್ಲಿ ಯಾವನಿಗೆ ನ್ಯೂನತೆವಿರುತ್ತದೋ, ಅವನು ದೇವರ ರೊಟ್ಟಿಯನ್ನು ಸಮರ್ಪಿಸುವುದಕ್ಕಾಗಿ ಬರಬಾರದು.</verse>
				<verse number="18">ಊನಗೊಂಡ ಮನುಷ್ಯನು ಸಮೀಪಕ್ಕೆ ಬರಬಾರದು. ಎಂದರೆ, ಕಣ್ಣಿಲ್ಲದವನು, ಕುಂಟನು, ಕುರೂಪವುಳ್ಳವನು, ಅಂಗವಿಕಲನು,</verse>
				<verse number="19">ಮುರಿದ ಪಾದವುಳ್ಳವನು, ಮುರಿದ ಕೈಯುಳ್ಳವನು,</verse>
				<verse number="20">ಗೂನು ಬೆನ್ನುಳ್ಳವನು, ಗಿಡ್ಡನು, ಕಣ್ಣುಗಳಲ್ಲಿ ನ್ಯೂನತೆವುಳ್ಳವನು, ಕಜ್ಜಿತುರಿಗಳುಳ್ಳವನು, ತನ್ನನ್ನು ನಪುಂಸಕನನ್ನಾಗಿ ಮಾಡಿಕೊಂಡವನು,</verse>
				<verse number="21">ಯಾಜಕನಾದ ಆರೋನನ ಸಂತತಿಯಲ್ಲಿ ನ್ಯೂನತೆವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸುವುದಕ್ಕಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ಬರಬಾರದು. ನ್ಯೂನತೆವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವುದಕ್ಕಾಗಿ ಸಮೀಪ ಬರಬಾರದು.</verse>
				<verse number="22">ಅವನು ದೇವರ ರೊಟ್ಟಿಯಲ್ಲಿ ಪರಿಶುದ್ಧವಾದದ್ದನ್ನೂ, ಮಹಾಪರಿಶುದ್ಧವಾದದ್ದನ್ನೂ ತಿನ್ನಬಹುದು.</verse>
				<verse number="23">ಆದರೆ ಅವನು ನ್ಯೂನತೆವುಳ್ಳವನಾದ್ದರಿಂದ ತೆರೆಯ ಒಳಗೆ ಹೋಗಬಾರದು ಹಾಗು ಯಜ್ಞವೇದಿಯ ಬಳಿಗೆ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’ ”</verse>
				<verse number="24">ಮೋಶೆಯು ಅದನ್ನು ಆರೋನನಿಗೂ, ಅವನ ಪುತ್ರರಿಗೂ, ಇಸ್ರಾಯೇಲರಿಗೂ ಹೇಳಿದನು.</verse>
			</chapter>
			<chapter number="22">
				<verse number="1">ತರುವಾಯ ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="2">“ಆರೋನನೊಂದಿಗೂ, ಅವನ ಪುತ್ರರೊಂದಿಗೂ ಮಾತನಾಡು, ಅವರು ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡದಂತೆ ಇಸ್ರಾಯೇಲರು ನನಗೆ ಸಲ್ಲಿಸುವ ಪರಿಶುದ್ಧವಾದವುಗಳನ್ನು ಗೌರವದಿಂದ ಅವರು ಪ್ರತ್ಯೇಕವಾಗಿರಿಸಬೇಕು. ನಾನೇ ಯೆಹೋವ ದೇವರು.</verse>
				<verse number="3">“ಅವರಿಗೆ ನೀನು ಹೀಗೆ ಹೇಳು: ‘ನಿಮ್ಮ ಎಲ್ಲಾ ಸಂತತಿಯ ವಂಶಾವಳಿಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲರು ಯೆಹೋವ ದೇವರಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ, ಅವನನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು. ನಾನೇ ಯೆಹೋವ ದೇವರು.</verse>
				<verse number="4">“ ‘ಆರೋನನ ಸಂತತಿಯವರಲ್ಲಿ ಯಾವನಾದರೂ ಚರ್ಮರೋಗ ಇಲ್ಲವೆ ಸ್ರಾವವುಳ್ಳವನಿದ್ದರೆ, ಅವನು ಶುದ್ಧನಾಗುವವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು</verse>
				<verse number="5">ಇಲ್ಲವೆ ತನ್ನನ್ನು ಅಶುದ್ಧನಾಗುವಂತೆ ಹರಿದಾಡುವ ಯಾವುದನ್ನಾಗಲಿ ಇಲ್ಲವೆ ಅಶುದ್ಧ ಮನುಷ್ಯನನ್ನಾಗಲಿ ಮುಟ್ಟಿದವನು,</verse>
				<verse number="6">ಸಂಜೆಯವರೆಗೆ ಅಶುದ್ಧನಾಗಿರಬೇಕು. ಅವನು ನೀರಿನಲ್ಲಿ ಸ್ನಾನಮಾಡಿದ ಮೇಲೆ ಪರಿಶುದ್ಧವಾದವುಗಳನ್ನು ತಿನ್ನಬಹುದು.</verse>
				<verse number="7">ಸೂರ್ಯನು ಮುಳುಗಿದಾಗ ಅವನು ಶುದ್ಧನಾಗಿರುವನು. ತರುವಾಯ ಅವನು ಪರಿಶುದ್ಧವಾದವುಗಳನ್ನು ತಿನ್ನಲಿ. ಏಕೆಂದರೆ ಅದು ಅವನಿಗೆ ಆಹಾರ.</verse>
				<verse number="8">ತನ್ನನ್ನು ಅಶುದ್ಧಮಾಡಿಕೊಳ್ಳದಂತೆ ತನ್ನಷ್ಟಕ್ಕೆ ತಾನೇ ಸತ್ತಿರುವುದನ್ನಾಗಲಿ ಇಲ್ಲವೆ ಕಾಡುಮೃಗಗಳಿಂದ ಕೊಂದದ್ದನ್ನಾಗಲಿ ತಿನ್ನಬಾರದು. ನಾನೇ ಯೆಹೋವ ದೇವರು.</verse>
				<verse number="9">“ ‘ಯಾಜಕರು ಅದನ್ನು ಅಪವಿತ್ರ ಪಡಿಸಿದರೆ, ಅದರ ನಿಮಿತ್ತ ಅಪರಾಧಿಯಾಗಿ ಸಾಯದಂತೆ ನನ್ನ ವಿಧಿಗಳನ್ನು ಕೈಗೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.</verse>
				<verse number="10">“ ‘ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಅತಿಥಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.</verse>
				<verse number="11">ಆದರೆ ಯಾಜಕನು ಯಾವನನ್ನಾದರೂ ತನ್ನ ಹಣದಿಂದ ಕೊಂಡುಕೊಂಡರೆ, ಅವನು ಅದರಲ್ಲಿ ತಿನ್ನಬಹುದು. ಅವನ ಮನೆಯಲ್ಲಿ ಹುಟ್ಟಿದವನು ಅದನ್ನು ತಿನ್ನಬಹುದು.</verse>
				<verse number="12">ಯಾಜಕನ ಮಗಳು ಒಬ್ಬ ಯಾಜಕನಲ್ಲದವನನ್ನು ಮದುವೆಯಾದರೆ, ಅವಳು ಸಮರ್ಪಣೆಯಾದ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.</verse>
				<verse number="13">ಯಾಜಕನ ಮಗಳು ವಿಧವೆಯಾಗಿದ್ದರೆ ಇಲ್ಲವೆ ಗಂಡಬಿಟ್ಟವಳಾಗಿದ್ದರೆ ಮತ್ತು ಮಕ್ಕಳಿಲ್ಲದವಳಾಗಿ ತನ್ನ ಯೌವನದಲ್ಲಿದ್ದಂತೆಯೇ ತನ್ನ ತಂದೆಯ ಮನೆಗೆ ಹಿಂದಿರುಗಿದವಳಾಗಿದ್ದರೆ, ಅವಳು ತನ್ನ ತಂದೆಯ ಆಹಾರದಲ್ಲಿ ತಿನ್ನಲಿ. ಆದರೆ ಯಾಜಕರಲ್ಲದ ಕುಟುಂಬದವರು ಅದರಲ್ಲಿ ತಿನ್ನಬಾರದು.</verse>
				<verse number="14">“ ‘ಇದಲ್ಲದೆ ಯಾವನಾದರೂ ತಿಳಿಯದೆ ಪರಿಶುದ್ಧವಾದದ್ದನ್ನು ತಿಂದರೆ, ಅವನು ಅದರ ಐದನೆಯ ಪಾಲನ್ನು ಕೂಡಿಸಿ, ಪರಿಶುದ್ಧವಾದದ್ದನ್ನು ಯಾಜಕನಿಗೆ ಕೊಡಬೇಕು.</verse>
				<verse number="15">ಇಸ್ರಾಯೇಲರು ಯೆಹೋವ ದೇವರಿಗೆ ಅರ್ಪಿಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು.</verse>
				<verse number="16">ಇಲ್ಲವೆ ಅವರು ಪರಿಶುದ್ಧವಾದವುಗಳನ್ನು ತಿನ್ನುವುದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’ ”</verse>
				<verse number="17">ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="18">“ಆರೋನನೊಂದಿಗೂ, ಅವನ ಪುತ್ರರೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದದ್ದು ಇದೇ, ‘ಇಸ್ರಾಯೇಲ್ ಮನೆತನದವರಲ್ಲಿಯಾಗಲಿ, ಇಸ್ರಾಯೇಲರಾದ ಪರಕೀಯರಲ್ಲಿಯಾಗಲಿ ಯಾರಾದರೂ ತಮ್ಮ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಯೆಹೋವ ದೇವರಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ</verse>
				<verse number="19">ನೀವು ನಿಮ್ಮ ಸ್ವಯಿಚ್ಛೆಯಿಂದ ಕಳಂಕರಹಿತವಾದ ಗಂಡು ಪಶು, ಕುರಿ ಅಥವಾ ಮೇಕೆಯನ್ನೇ ಅರ್ಪಿಸಬೇಕು.</verse>
				<verse number="20">ಆದರೆ ದೋಷವಿರುವ ಯಾವುದನ್ನೂ ಸಮರ್ಪಿಸಬಾರದು. ಏಕೆಂದರೆ ಅದು ನಿಮಗೋಸ್ಕರ ಅಂಗೀಕಾರವಾಗುವುದಿಲ್ಲ.</verse>
				<verse number="21">ತಮ್ಮ ಪ್ರಮಾಣವನ್ನು ಪೂರೈಸುವ ಹಾಗೆ ಯಾರಾದರೂ ಸಮಾಧಾನದ ಬಲಿಯನ್ನಾಗಲಿ, ಪಶುಗಳನ್ನಾಗಲಿ, ಕುರಿಗಳನ್ನಾಗಲಿ ಉಚಿತವಾದ ಕಾಣಿಕೆಯಾಗಿ ಯೆಹೋವ ದೇವರಿಗೆ ಅರ್ಪಿಸುವುದಾದರೆ, ಅದು ಅಂಗೀಕಾರಕ್ಕೆ ಪರಿಪೂರ್ಣವುಳ್ಳದ್ದಾಗಿರಬೇಕು. ಅದರೊಳಗೆ ಯಾವ ದೋಷವೂ ಕಳಂಕವೂ ಇರಬಾರದು.</verse>
				<verse number="22">ಕುರುಡಾದದ್ದು, ಮುರಿದದ್ದು, ಅಂಗಹೀನವಾದದ್ದು, ಬೊಕ್ಕೆಯುಳ್ಳದ್ದು, ಕಜ್ಜಿ ತುರಿಯುಳ್ಳದ್ದು, ಇವುಗಳನ್ನು ನೀವು ಯೆಹೋವ ದೇವರಿಗೆ ಸಮರ್ಪಿಸಲೂಬಾರದು ಮತ್ತು ಅವುಗಳನ್ನು ಬಲಿಪೀಠದ ಮೇಲೆ ದಹನಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಲೂಬಾರದು.</verse>
				<verse number="23">ಹೋರಿಯಾಗಲಿ ಇಲ್ಲವೆ ಕುರಿಮರಿಯಾಗಲಿ ಅದಕ್ಕೆ ಹೆಚ್ಚಾದ ಅಂಗವಿರುವದಾಗಿದ್ದರೆ ಇಲ್ಲವೆ ಅದರ ಅಂಗಗಳಲ್ಲಿ ಕೊರತೆಯಿರುವುದಾದರೆ, ಅದನ್ನು ಉಚಿತ ಕಾಣಿಕೆಯಾಗಿ ಅರ್ಪಿಸಬಹುದು. ಆದರೆ ಹರಕೆಯಾಗಿ ಅದು ಅಂಗೀಕಾರವಾಗುವುದಿಲ್ಲ.</verse>
				<verse number="24">ಜಜ್ಜಿ ಗಾಯವಾದ, ನುಜ್ಜುಗುಜ್ಜಾದ, ಮುರಿದ ಇಲ್ಲವೆ ಕೊಯ್ದಿರುವ ಯಾವುದನ್ನೂ ಯೆಹೋವ ದೇವರಿಗೆ ಸಮರ್ಪಿಸಬಾರದು. ನಿಮ್ಮ ದೇಶದೊಳಗಿರುವ ಅಂಥ ಯಾವ ಬಲಿಯನ್ನಾದರೂ ನೀವು ಸಮರ್ಪಿಸಬಾರದು.</verse>
				<verse number="25">ಇದಲ್ಲದೆ ಪರಕೀಯನಿಂದ ತೆಗೆದುಕೊಂಡ ಅಂತಹ ಯಾವ ಪಶುವನ್ನೂ ನಿಮ್ಮ ದೇವರಿಗೆ ಆಹಾರವಾಗಿ ಅರ್ಪಿಸಬಾರದು. ಏಕೆಂದರೆ ಅವರ ಕುಂದುಳ್ಳದ್ದು ಮತ್ತು ದೋಷಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರವಾಗಿ ಅಂಗೀಕಾರವಾಗುವುದಿಲ್ಲ.’ ”</verse>
				<verse number="26">ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="27">“ಹೋರಿಯನ್ನಾಗಲಿ ಇಲ್ಲವೆ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ, ಏಳು ದಿವಸಗಳವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸಿದರೆ ಅಂಗೀಕಾರವಾಗುವುದು.</verse>
				<verse number="28">ಹಸುವನ್ನಾಗಲಿ ಇಲ್ಲವೆ ಕುರಿಯನ್ನಾಗಲಿ ಅದರ ಮರಿಯೊಂದಿಗೆ ಎರಡನ್ನೂ ಒಂದೇ ದಿನದಲ್ಲಿ ವಧಿಸಬಾರದು.</verse>
				<verse number="29">“ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು, ಯೆಹೋವ ದೇವರಿಗೆ ಮಾಡುವ ಬಲಿದಾನವನ್ನು ಮೆಚ್ಚಿಗೆಯಾದ ರೀತಿಯಲ್ಲಿ ಸಮರ್ಪಿಸಬೇಕು.</verse>
				<verse number="30">ಅದೇ ದಿನದಲ್ಲಿ ಅದನ್ನು ತಿಂದುಬಿಡಬೇಕು. ಅದರಲ್ಲಿ ಯಾವುದನ್ನೂ ಮಾರನೆಯ ದಿನದವರೆಗೆ ಉಳಿಸಬಾರದು. ನಾನೇ ಯೆಹೋವ ದೇವರು.</verse>
				<verse number="31">“ಆದ್ದರಿಂದ ನೀವು ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳನ್ನು ಮಾಡಬೇಕು. ನಾನೇ ಯೆಹೋವ ದೇವರು.</verse>
				<verse number="32">ನನ್ನ ಪರಿಶುದ್ಧವಾದ ಹೆಸರನ್ನು ಅಪರಿಶುದ್ಧಗೊಳಿಸಬಾರದು, ಏಕೆಂದರೆ ಇಸ್ರಾಯೇಲರ ಮಧ್ಯದಲ್ಲಿ ನಾನು ಪರಿಶುದ್ಧನೆಂದು ಪರಿಗಣಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವ ದೇವರು ನಾನೇ.</verse>
				<verse number="33">ನಿಮಗೆ ದೇವರಾಗಿರಲು ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದೆನು. ನಾನೇ ಯೆಹೋವ ದೇವರು.”</verse>
			</chapter>
			<chapter number="23">
				<verse number="1">ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="2">“ಇಸ್ರಾಯೇಲರೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು, ‘ನೀವು ಪರಿಶುದ್ಧ ಸಭೆಗಳಾಗಿ ಸೇರಿ ಯೆಹೋವ ದೇವರಾಗಿರುವ ನನಗೋಸ್ಕರ ನೇಮಕವಾದ ಈ ಹಬ್ಬಗಳನ್ನು ಪ್ರಕಟಿಸಬೇಕು.</verse>
				<verse number="3">“ ‘ಆರು ದಿವಸ ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ಸಬ್ಬತ್ ದಿನ. ಆ ದಿನವು ಪರಿಶುದ್ಧ ದಿನವಾಗಿರುವುದು. ನೀವು ಆ ದಿನದಲ್ಲಿ ಕೆಲಸಮಾಡಬಾರದು. ನಿಮ್ಮ ಎಲ್ಲಾ ನಿವಾಸಗಳಲ್ಲಿಯೂ ಅದು ಯೆಹೋವ ದೇವರ ಸಬ್ಬತ್ ದಿನವಾಗಿರುವುದು.</verse>
				<verse number="4">“ ‘ಇವು ಯೆಹೋವ ದೇವರ ಹಬ್ಬಗಳು: ನೀವು ನೇಮಕವಾದ ಕಾಲಗಳಲ್ಲಿ ನಿಮ್ಮ ಪವಿತ್ರ ಸಭಾ ಕೂಟಗಳಲ್ಲಿ ಈ ಹಬ್ಬಗಳನ್ನು ಪ್ರಕಟಿಸಬೇಕು.</verse>
				<verse number="5">ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯಲ್ಲಿ ಯೆಹೋವ ದೇವರ ಪಸ್ಕಹಬ್ಬವಾಗಬೇಕು.</verse>
				<verse number="6">ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಯೆಹೋವ ದೇವರಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.</verse>
				<verse number="7">ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಯಾವ ತರವಾದ ಉದ್ಯೋಗವನ್ನು ನೀವು ಆ ದಿನದಲ್ಲಿ ಮಾಡಬೇಡಿರಿ.</verse>
				<verse number="8">ಆದರೆ ಏಳು ದಿವಸ ನೀವು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಬಲಿಯನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ಪರಿಶುದ್ಧ ಸಭಾಕೂಟವಿರುವುದು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡಬಾರದು.’ ”</verse>
				<verse number="9">ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="10">“ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿಯನ್ನು ಕೊಯ್ದರೆ, ನಿಮ್ಮ ಸುಗ್ಗಿಯ ಪ್ರಥಮ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು.</verse>
				<verse number="11">ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಅರ್ಪಿಸಬೇಕು. ಸಬ್ಬತ್ ದಿನವಾದ ಮಾರನೆಯ ದಿನ ಯಾಜಕನು ಅದನ್ನು ಅರ್ಪಿಸಬೇಕು.</verse>
				<verse number="12">ನೀವು ಸಿವುಡನ್ನು ಅರ್ಪಿಸುವ ದಿನದಲ್ಲಿ ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವಂತೆ ಒಂದು ವರ್ಷದ ಮತ್ತು ಕಳಂಕರಹಿತವಾದ ಕುರಿಮರಿಯನ್ನು ಅರ್ಪಿಸಬೇಕು.</verse>
				<verse number="13">ಇದರೊಂದಿಗೆ, ಧಾನ್ಯ ಸಮರ್ಪಣೆಯಲ್ಲಿ ಬೆರೆಸಿದ ಎಣ್ಣೆ ಮತ್ತು ಮೂರು ಕಿಲೋಗ್ರಾಂ ನಯವಾದ ಹಿಟ್ಟನ್ನು ಆಹ್ಲಾದಕರವಾದ ಪರಿಮಳದ ರೂಪದಲ್ಲಿ ಯೆಹೋವ ದೇವರಿಗೆ ಅರ್ಪಿಸಬೇಕು. ಇದಲ್ಲದೆ ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಸುಮಾರು ಒಂದು ಲೀಟರ್ ದ್ರಾಕ್ಷಾರಸ ಆಗಿರಬೇಕು.</verse>
				<verse number="14">ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಬಲಿಯನ್ನು ತರುವವರೆಗೆ ರೊಟ್ಟಿಯನ್ನಾಗಲಿ, ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿಯೂ ಶಾಶ್ವತವಾದ ನಿಯಮವಾಗಿರಬೇಕು.</verse>
				<verse number="15">“ ‘ಸಬ್ಬತ್ ದಿನದ ಮಾರನೆಯ ದಿನ ನೀವು ನೈವೇದ್ಯವಾಗಿ ನಿವಾಳಿಸಿದ ಸಿವುಡನ್ನು ತಂದ ದಿನದಿಂದ ಏಳು ವಾರಗಳು ಪೂರ್ಣವಾಗುವವರೆಗೆ ಲೆಕ್ಕಿಸಬೇಕು.</verse>
				<verse number="16">ಏಳನೆಯ ಸಬ್ಬತ್ ದಿನದ ಮಾರನೆಯ ದಿನದಿಂದ ನೀವು ಐವತ್ತು ದಿನಗಳನ್ನು ಲೆಕ್ಕಿಸಬೇಕು. ನೀವು ಯೆಹೋವ ದೇವರಿಗೆ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸಬೇಕು.</verse>
				<verse number="17">ಇದಲ್ಲದೆ ನೀವು ನಿಮ್ಮ ಮನೆಗಳಿಂದ ತಂದ ಹಿಟ್ಟಿನಲ್ಲಿ ಎರಡೆರಡು ಓಮರ್ ಹಿಟ್ಟಿನಿಂದ ಎರಡು ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋಧಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವ ದೇವರಿಗೆ ನೈವೇದ್ಯವಾಗಿ ನಿವಾಳಿಸಬೇಕು.</verse>
				<verse number="18">ಇದಲ್ಲದೆ ನೀವು ರೊಟ್ಟಿಯೊಂದಿಗೆ ಕಳಂಕರಹಿತವಾದ ಒಂದು ವರ್ಷದ ಏಳು ಕುರಿಮರಿಗಳನ್ನೂ ಒಂದು ಎಳೆಯ ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸಬೇಕು. ಅವು ಯೆಹೋವ ದೇವರಿಗೆ ದಹನಬಲಿಗಳಾಗುವುವು. ಅವುಗಳೊಂದಿಗೆ ಆಹಾರ ಬಲಿಯು ಮತ್ತು ಪಾನಾರ್ಪಣೆಗಳು, ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸುವಾಸನೆಯಾದ ಅರ್ಪಣೆಗಳಾಗಿರಬೇಕು.</verse>
				<verse number="19">ತರುವಾಯ ಹೋತವನ್ನು ಪಾಪ ಪರಿಹಾರದ ಬಲಿಯಾಗಿಯೂ ಮತ್ತು ಸಮಾಧಾನ ಬಲಿಯಾಗಿ ಒಂದು ವರ್ಷದ ಎರಡು ಕುರಿಮರಿಗಳನ್ನು ಬಲಿಯಾಗಿ ಅರ್ಪಿಸಬೇಕು.</verse>
				<verse number="20">ಯಾಜಕನು ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಥಮ ಫಲದ ರೊಟ್ಟಿಯೊಂದಿಗೂ, ಎರಡು ಕುರಿಮರಿಗಳೊಂದಿಗೂ ಅವುಗಳನ್ನು ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವ ದೇವರಿಗೆ ಪರಿಶುದ್ಧವಾಗಿದ್ದು ಯಾಜಕನಿಗೋಸ್ಕರ ಇರಬೇಕು.</verse>
				<verse number="21">ಅದೇ ದಿನದಲ್ಲಿ ಪವಿತ್ರ ಸಭೆ ಕೂಡುವುದೆಂದು ಪ್ರಕಟಿಸಬೇಕು ಮತ್ತು ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ, ನೀವು ಎಲ್ಲೇ ಇದ್ದರೂ ಪಾಲಿಸಬೇಕಾದ ಶಾಶ್ವತ ನಿಯಮ.</verse>
				<verse number="22">“ ‘ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯುವಾಗ, ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು, ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನೂ ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”</verse>
				<verse number="23">ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="24">“ಇಸ್ರಾಯೇಲರೊಂದಿಗೆ ಮಾತನಾಡಿ: ‘ಏಳನೆಯ ತಿಂಗಳಿನಲ್ಲಿ ಮೊದಲನೆಯ ದಿನದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥವಾದ ಸಬ್ಬತ್ ದಿನವಾಗಿರಬೇಕು. ಆ ದಿನ ಪರಿಶುದ್ಧ ಸಭೆಯ ಕೂಟವೂ ಇರಬೇಕು.</verse>
				<verse number="25">ನೀವು ಅದರಲ್ಲಿ ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ದಹನಬಲಿಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು,’ ” ಎಂದು ಹೇಳಿದರು.</verse>
				<verse number="26">ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="27">“ಈ ಏಳನೆಯ ತಿಂಗಳಿನ ಹತ್ತನೆಯ ದಿವಸವು ಪ್ರಾಯಶ್ಚಿತ್ತದ ದಿವಸವಾಗಿರುವುದು. ಅದು ನಿಮಗೆ ಒಂದು ಪರಿಶುದ್ಧ ಸಭೆಯ ಕೂಟವಾಗಿರುವುದು. ನೀವು ಉಪವಾಸ ಮಾಡಿ ಬೆಂಕಿಯಿಂದ ಮಾಡಿದ ಸಮರ್ಪಣೆಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು.</verse>
				<verse number="28">ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಏಕೆಂದರೆ ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿರುವುದು.</verse>
				<verse number="29">ಅದೇ ದಿವಸದಲ್ಲಿ ಯಾರಾದರೂ ಉಪವಾಸ ಮಾಡದೆ ಇದ್ದಲ್ಲಿ, ಅವರು ತಮ್ಮ ಜನರೊಳಗಿಂದ ಸಂಪೂರ್ಣವಾಗಿ ತೆಗೆಯಲಾಗುವುದು.</verse>
				<verse number="30">ಅದೇ ದಿವಸದಲ್ಲಿ ಯಾರಾದರೂ ಕೆಲಸವನ್ನು ಮಾಡಿದರೆ, ಅವರನ್ನು ನಾನು ಅವರ ಜನರ ಮಧ್ಯದಿಂದ ನಾಶಮಾಡುವೆನು.</verse>
				<verse number="31">ನೀವು ಯಾವ ತರಹದ ಕೆಲಸವನ್ನೂ ಮಾಡಬಾರದು. ಇದು ನಿಮ್ಮ ಸಂತತಿಗೆ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.</verse>
				<verse number="32">ಇದು ನಿಮಗೆ ಸಬ್ಬತ್ ದಿನವಾಗಿರುವುದು. ನೀವು ನಿಮ್ಮನ್ನು ಉಪವಾಸ ಇಡಬೇಕು. ಆ ತಿಂಗಳಿನ ಒಂಬತ್ತನೆಯ ದಿವಸದ ಸಾಯಂಕಾಲದಿಂದ ಹಿಡಿದು ಮರುದಿನದ ಸಂಜೆಯವರೆಗೆ ಸಬ್ಬತ್ ದಿನವನ್ನು ಆಚರಿಸಬೇಕು,” ಎಂಬದೇ.</verse>
				<verse number="33">ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="34">“ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳವರೆಗೆ ಯೆಹೋವ ದೇವರಿಗೆ ಗುಡಾರಗಳ ಹಬ್ಬವಾಗಿರುವುದು.</verse>
				<verse number="35">ಮೊದಲನೆಯ ದಿವಸದಲ್ಲಿ ಪರಿಶುದ್ಧ ಸಭೆಯ ಕೂಟವಿರುವುದು. ನೀವು ಅದರಲ್ಲಿ ಕಷ್ಟಕರವಾದ ಕೆಲಸಗಳನ್ನು ಮಾಡಬಾರದು.</verse>
				<verse number="36">ಏಳು ದಿವಸ ನೀವು ಬೆಂಕಿಯ ಮೂಲಕ ಬಲಿಗಳನ್ನು ಯೆಹೋವ ದೇವರಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿಶುದ್ಧ ಕೂಟವಾಗಿರುವುದು. ನೀವು ಬೆಂಕಿಯ ಮೂಲಕ ಬಲಿಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು. ಅದೊಂದು ಗಂಭೀರ ಸಭೆಯಾಗಿರುವುದು. ಅದರಲ್ಲಿ ನೀವು ಕಷ್ಟಕರವಾದ ಕೆಲಸಗಳನ್ನು ಮಾಡಬಾರದು.</verse>
				<verse number="37">“ ‘ನೀವು ಪರಿಶುದ್ಧ ಸಭೆಯಾಗಿ ಯೆಹೋವ ದೇವರ ನೇಮಕವಾದ ಹಬ್ಬಗಳು ಇವೇ. ಇವುಗಳ ಒಂದೊಂದು ದಿವಸದಲ್ಲಿ ಯೆಹೋವ ದೇವರಿಗೆ ದಹನಬಲಿಯನ್ನೂ, ಧಾನ್ಯ ಸಮರ್ಪಣೆಯನ್ನೂ, ಯಜ್ಞವನ್ನೂ, ಪಾನದ್ರವ್ಯ ಬಲಿಗಳನ್ನೂ ಅರ್ಪಿಸಬೇಕು.</verse>
				<verse number="38">ಯೆಹೋವ ದೇವರ ವಿಶ್ರಾಂತಿಯ ದಿನಗಳ ಹೊರತಾಗಿಯೂ, ನೀವು ಯೆಹೋವ ದೇವರಿಗೆ ಸಮರ್ಪಿಸುವ ನಿಮ್ಮ ದಾನಗಳ ಹೊರತಾಗಿಯೂ, ನಿಮ್ಮ ಎಲ್ಲಾ ಹರಕೆಗಳ ಹೊರತಾಗಿಯೂ, ನಿಮ್ಮ ಎಲ್ಲಾ ಸ್ವಯಿಚ್ಛೆಯ ಕಾಣಿಕೆಗಳ ಹೊರತಾಗಿಯೂ ಸಲ್ಲಿಸಬೇಕಾದ ಅರ್ಪಣೆಗಳಿರುತ್ತವೆ.</verse>
				<verse number="39">“ ‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಭೂಮಿಯ ಫಲವನ್ನು ಕೂಡಿಸಿದಾಗ, ಯೆಹೋವ ದೇವರಿಗೆ ಏಳು ದಿವಸಗಳ ಹಬ್ಬವನ್ನು ಕೈಗೊಳ್ಳಬೇಕು. ಮೊದಲನೆಯ ದಿನವು ಸಬ್ಬತ್ ದಿನವಾಗಿರಬೇಕು ಮತ್ತು ಎಂಟನೆಯ ದಿನವು ಸಬ್ಬತ್ ದಿನವಾಗಿರಬೇಕು.</verse>
				<verse number="40">ಮೊದಲನೆಯ ದಿವಸದಲ್ಲಿ ನೀವು ಸುಂದರವಾದ ಮರಗಳ ರೆಂಬೆಗಳನ್ನೂ, ಖರ್ಜೂರ ಮರಗಳ ರೆಂಬೆಗಳನ್ನೂ, ದಟ್ಟವಾದ ಮರಗಳ ರೆಂಬೆಗಳನ್ನೂ, ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳವರೆಗೆ ನಿಮ್ಮ ದೇವರಾಗಿರುವ ಯೆಹೋವ ದೇವರ ಎದುರಿನಲ್ಲಿ ಸಂತೋಷ ಪಡಬೇಕು.</verse>
				<verse number="41">ವರ್ಷದಲ್ಲಿ ನೀವು ಏಳು ದಿವಸಗಳ ಹಬ್ಬವನ್ನು ಯೆಹೋವ ದೇವರಿಗಾಗಿ ಕೈಗೊಳ್ಳಬೇಕು. ಇದು ನಿಮ್ಮ ಸಂತತಿಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು. ನೀವು ಇದನ್ನು ಏಳನೆಯ ತಿಂಗಳಿನಲ್ಲಿ ಆಚರಿಸಬೇಕು.</verse>
				<verse number="42">ಏಳು ದಿವಸಗಳವರೆಗೆ ನೀವು ಗುಡಾರಗಳಲ್ಲಿ ವಾಸಿಸಬೇಕು. ಸ್ವದೇಶೀಯರಾದ ಇಸ್ರಾಯೇಲರಾಗಿ ಹುಟ್ಟಿದವರೆಲ್ಲರೂ ಗುಡಾರಗಳಲ್ಲಿ ವಾಸಿಸಬೇಕು.</verse>
				<verse number="43">ಏಕೆಂದರೆ ನಾನು ಇಸ್ರಾಯೇಲರನ್ನು ಈಜಿಪ್ಟ್ ದೇಶದೊಳಗಿನಿಂದ ಹೊರಗೆ ಬರಮಾಡಿದಾಗ, ಅವರು ಗುಡಾರಗಳಲ್ಲಿ ವಾಸಿಸುವಂತೆ ಮಾಡಿದೆನೆಂದು ನಿಮ್ಮ ಸಂತತಿಯವರು ತಿಳಿದುಕೊಳ್ಳುವರು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”</verse>
				<verse number="44">ಹೀಗೆ ಮೋಶೆಯು ಇಸ್ರಾಯೇಲರಿಗೆ ಯೆಹೋವ ದೇವರ ಹಬ್ಬಗಳನ್ನು ನೇಮಕಮಾಡಿದನು.</verse>
			</chapter>
			<chapter number="24">
				<verse number="1">ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="2">“ಬೆಳಕಿಗೋಸ್ಕರ ದೀಪಗಳು ಯಾವಾಗಲೂ ಉರಿಯುತ್ತಿರುವಂತೆ ಅವರು ಕುಟ್ಟಿದ ಶುದ್ಧವಾದ ಓಲಿವ್ ಎಣ್ಣೆಯನ್ನು ನನ್ನ ಬಳಿಗೆ ತರುವಂತೆ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕು.</verse>
				<verse number="3">ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ನಿಮಗೆ ಮತ್ತು ನಿಮ್ಮ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರುವುದು.</verse>
				<verse number="4">ದೀಪಗಳು ಚೊಕ್ಕ ಬಂಗಾರದ ದೀಪಸ್ತಂಭದ ಮೇಲೆ ಯೆಹೋವ ದೇವರ ಸನ್ನಿಧಿಯಲ್ಲಿ ಯಾವಾಗಲೂ ಇರುವಂತೆ ಅವನು ಕ್ರಮಪಡಿಸಬೇಕು.</verse>
				<verse number="5">“ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು. ಪ್ರತಿಯೊಂದು ರೊಟ್ಟಿ ಎರಡೆರಡು ಓಮರನಷ್ಟು ಇರಬೇಕು.</verse>
				<verse number="6">ಅವುಗಳನ್ನು ಚೊಕ್ಕ ಬಂಗಾರದ ಮೇಜಿನ ಮೇಲೆ ಯೆಹೋವ ದೇವರ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ, ಎರಡು ಸಾಲುಗಳನ್ನಾಗಿ ಇಡಬೇಕು.</verse>
				<verse number="7">ರೊಟ್ಟಿಯ ಮೇಲೆ ಅದು ಜ್ಞಾಪಕಾರ್ಥವಾಗಿ ಇರುವಂತೆಯೂ, ಬೆಂಕಿಯ ಮೂಲಕ ಯೆಹೋವ ದೇವರಿಗೆ ಸಮರ್ಪಣೆಯಾಗುವಂತೆಯೂ, ಪ್ರತಿಯೊಂದು ಸಾಲಿನ ಮೇಲೆ ಶುದ್ಧವಾದ ಸಾಂಬ್ರಾಣಿಯನ್ನು ಹಾಕಬೇಕು.</verse>
				<verse number="8">ಪ್ರತಿಯೊಂದು ಸಬ್ಬತ್ ದಿನದಲ್ಲಿಯೂ ಯೆಹೋವ ದೇವರ ಎದುರಿನಲ್ಲಿ ಯಾವಾಗಲೂ ಅವನು ಅದನ್ನು ಕ್ರಮಪಡಿಸಬೇಕು. ಇದು ಇಸ್ರಾಯೇಲರ ಕಡೆಯಿಂದ ನಿತ್ಯವಾದ ಒಡಂಬಡಿಕೆಯಾಗಿರಬೇಕು.</verse>
				<verse number="9">ಅದು ಆರೋನನ ಮತ್ತು ಅವನ ಪುತ್ರರದಾಗಿರಬೇಕು. ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಏಕೆಂದರೆ ಅದು ನಿತ್ಯವಾದ ನಿಯಮವಾಗಿ ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವವುಗಳಲ್ಲಿ ಅವನಿಗೆ ಮಹಾಪರಿಶುದ್ಧವಾಗಿರುವುದು.”</verse>
				<verse number="10">ಇಸ್ರಾಯೇಲಿನವಳಾದ ಒಬ್ಬ ಸ್ತ್ರೀಗೂ, ಈಜಿಪ್ಟಿನವನಾದ ಪುರುಷನಿಗೂ ಹುಟ್ಟಿದ ಮಗನು ಇಸ್ರಾಯೇಲರ ಪಾಳ್ಯಕ್ಕೆ ಬಂದನು. ಇಸ್ರಾಯೇಲಿನವಳಾದ ಸ್ತ್ರೀಯ ಈ ಮಗನು ಇಸ್ರಾಯೇಲಿನ ಒಬ್ಬ ಮನುಷ್ಯನೊಂದಿಗೆ ಪಾಳೆಯದಲ್ಲಿ ಜಗಳವಾಡಿದರು.</verse>
				<verse number="11">ಇಸ್ರಾಯೇಲ್ ಸ್ತ್ರೀಯ ಮಗನು ಯೆಹೋವ ದೇವರ ನಾಮವನ್ನು ದೂಷಿಸಿ, ಶಪಿಸಿದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು. ಅವನ ತಾಯಿಯ ಹೆಸರು ಶೆಲೋಮಿತ್. ಇವಳು ದಾನ್ ಕುಲದ ದಿಬ್ರೀಯನ ಮಗಳು.</verse>
				<verse number="12">ಯೆಹೋವ ದೇವರ ಮನಸ್ಸನ್ನು ತಿಳಿಯುವಂತೆ ಅವನನ್ನು ಕಾವಲಲ್ಲಿ ಬಿಟ್ಟರು.</verse>
				<verse number="13">ಆಗ ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="14">“ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ, ಅವನಿಂದ ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ, ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ.</verse>
				<verse number="15">ನೀನು ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು, ‘ತನ್ನ ದೇವರನ್ನು ಶಪಿಸುವವನು, ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.</verse>
				<verse number="16">ಯೆಹೋವ ದೇವರ ನಾಮವನ್ನು ದೂಷಣೆ ಮಾಡುವವನಿಗೆ ನಿಶ್ಚಯವಾಗಿ ಮರಣವನ್ನು ವಿಧಿಸಬೇಕು. ಸಭೆಯವರೆಲ್ಲರೂ ನಿಶ್ಚಯವಾಗಿ ಅವನಿಗೆ ಕಲ್ಲೆಸೆಯಬೇಕು. ಇದಲ್ಲದೆ ಸ್ವದೇಶೀಯನಾಗಿರಲಿ, ಪರಕೀಯನಾಗಿರಲಿ ಯೆಹೋವ ದೇವರ ಹೆಸರನ್ನು ದೂಷಣೆ ಮಾಡಿದಾಗ, ಅವನನ್ನು ಮರಣ ಶಿಕ್ಷೆಗೆ ಒಳಪಡಿಸಬೇಕು.</verse>
				<verse number="17">“ ‘ಯಾರಾದರೂ ಮನುಷ್ಯನನ್ನು ಕೊಂದರೆ, ನಿಶ್ಚಯವಾಗಿ ಮರಣಕ್ಕೆ ಒಳಪಡಬೇಕು.</verse>
				<verse number="18">ಪಶುವನ್ನು ಕೊಲ್ಲುವವರು, ಅದಕ್ಕೆ ಪ್ರತಿಯಾಗಿ ಒಂದು ಪಶುವನ್ನು ಕೊಡಬೇಕು.</verse>
				<verse number="19">ಯಾರಾದರೂ ತಮ್ಮ ನೆರೆಯವನಿಗೆ ಊನವಾಗುವಂತೆ ಮಾಡಿದರೆ, ಅವರು ಮಾಡಿದಂತೆಯೇ ಅವರಿಗೆ ಮಾಡಬೇಕು.</verse>
				<verse number="20">ಮುರಿತಕ್ಕೆ ಮುರಿತ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಅವರು ಒಬ್ಬರಿಗೆ ಊನ ಮಾಡಿದ ಹಾಗೆಯೇ ಅವರಿಗೂ ಮಾಡಬೇಕು.</verse>
				<verse number="21">ಪಶುವನ್ನು ಕೊಲ್ಲುವವರು ಅದಕ್ಕೆ ಬದಲುಕೊಡಬೇಕು. ಮನುಷ್ಯರನ್ನು ಕೊಲ್ಲುವವರನ್ನು ಮರಣಕ್ಕೆ ಒಳಪಡಿಸಬೇಕು.</verse>
				<verse number="22">ನಿಮಗೆ ಒಂದೇ ವಿಧವಾದ ನಿಯಮವಿರಬೇಕು. ಸ್ವದೇಶಸ್ಥನಿಗೆ ಇರುವಂತೆಯೇ ಪರಕೀಯನಿಗೂ ಇರಬೇಕು. ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”</verse>
				<verse number="23">ಶಪಿಸಿದವನನ್ನು ಪಾಳೆಯದ ಹೊರಗೆ ತಂದು, ಅವನನ್ನು ಕಲ್ಲುಗಳಿಂದ ಹೊಡೆಯುವಂತೆ ಮೋಶೆಯು ಇಸ್ರಾಯೇಲರೊಂದಿಗೆ ಮಾತನಾಡಿದನು. ಆಗ ಇಸ್ರಾಯೇಲರು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು.</verse>
			</chapter>
			<chapter number="25">
				<verse number="1">ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="2">“ಇಸ್ರಾಯೇಲರೊಂದಿಗೆ ನೀನು ಮಾತನಾಡಿ ಅವರಿಗೆ ಹೀಗೆ ಹೇಳು, ‘ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಬಂದಾಗ, ದೇಶವು ಯೆಹೋವ ದೇವರಿಗಾಗಿ ಸಬ್ಬತ್ ದಿನವನ್ನು ಕೈಗೊಳ್ಳಬೇಕು.</verse>
				<verse number="3">ಆರು ವರ್ಷ ನೀವು ನಿಮ್ಮ ಹೊಲವನ್ನು ಬಿತ್ತಬೇಕು. ಆರು ವರ್ಷ ನೀವು ನಿಮ್ಮ ದ್ರಾಕ್ಷಿತೋಟವನ್ನು ಕತ್ತರಿಸಬೇಕು, ಅವುಗಳಿಂದ ಫಲವನ್ನು ಕೂಡಿಸಬೇಕು.</verse>
				<verse number="4">ಆದರೆ ಏಳನೆಯ ವರ್ಷವು ನೆಲಕ್ಕೆ ವಿಶ್ರಾಂತಿಕಾಲವಾಗಿರುವುದು. ಅದು ಯೆಹೋವ ದೇವರಿಗೆ ಸಬ್ಬತ್ ಕಾಲವಾಗಿರುವುದು. ನೀವು ಆ ವರ್ಷದಲ್ಲಿ ನಿಮ್ಮ ಹೊಲವನ್ನು ಬಿತ್ತಬಾರದು. ಇಲ್ಲವೆ ದ್ರಾಕ್ಷಿತೋಟವನ್ನು ಕತ್ತರಿಸಬಾರದು.</verse>
				<verse number="5">ತನ್ನಷ್ಟಕ್ಕೆ ತಾನೇ ಬೆಳೆದಿರುವ ಪೈರನ್ನು ನೀವು ಕೊಯ್ಯಬಾರದು. ಇಲ್ಲವೆ ಕತ್ತರಿಸದಿರುವ ದ್ರಾಕ್ಷಿಯ ಬಳ್ಳಿಯ ದ್ರಾಕ್ಷಿಹಣ್ಣುಗಳನ್ನು ಕೂಡಿಸಬಾರದು. ಏಕೆಂದರೆ ಅದು ದೇಶಕ್ಕೆ ವಿಶ್ರಾಂತಿಯ ವರ್ಷವಾಗಿರುವುದು.</verse>
				<verse number="6">ದೇಶದ ಆ ಸಬ್ಬತ್ ವರ್ಷದಲ್ಲಿ ತಾನಾಗಿಯೇ ಬೆಳೆದದ್ದು ನಿಮ್ಮ ಆಹಾರಕ್ಕಾಗಿ ಇರುವುದು. ಅದು ನಿಮಗೂ, ನಿಮ್ಮ ದಾಸದಾಸಿಯರಿಗೂ, ನಿಮ್ಮ ಕೂಲಿಯವರಿಗೂ, ನಿಮ್ಮೊಂದಿಗೆ ಪ್ರವಾಸಿಯಾಗಿರುವ ಪರಕೀಯರಿಗೂ,</verse>
				<verse number="7">ನಿಮ್ಮ ದೇಶದಲ್ಲಿರುವ ಹುಟ್ಟುವಳಿಯೆಲ್ಲಾ ನಿಮ್ಮ ಪಶು ಮತ್ತು ಕಾಡುಮೃಗಗಳಿಗೆ ಆಹಾರವಾಗಬಹುದು.</verse>
				<verse number="8">“ ‘ಇದಲ್ಲದೆ ಏಳು ವರ್ಷಕ್ಕೆ ಒಂದರಂತೆ ಏಳು ಸಬ್ಬತ್ ವರ್ಷಗಳನ್ನು ಎಣಿಸಬೇಕು. ಆ ಏಳು ಸಬ್ಬತ್ ವರ್ಷಗಳ ಕಾಲವು ಒಟ್ಟು ನಾಲ್ವತ್ತೊಂಬತ್ತು ವರ್ಷಗಳಾಗಿರುವುವು.</verse>
				<verse number="9">ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೆಯ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸಬೇಕು. ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.</verse>
				<verse number="10">ಐವತ್ತನೆಯ ವರ್ಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೆಯ ವರ್ಷದ ವಾರ್ಷಿಕೋತ್ಸವವಾಗಿರಬೇಕು. ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಆಸ್ತಿಗೂ, ಅವನವನ ಕುಟುಂಬಕ್ಕೂ, ಹಿಂದಿರುಗಿ ಹೋಗಬೇಕು.</verse>
				<verse number="11">ಐವತ್ತನೆಯ ಆ ವರುಷವು ನಿಮಗೆ ಜೂಬಿಲಿಯಾಗಿರುವುದು. ನೀವು ಬಿತ್ತಲೂಬಾರದು ಮತ್ತು ತನ್ನಷ್ಟಕ್ಕೆ ತಾನೇ ಬೆಳೆಯುವುದನ್ನು ಕೊಯ್ಯಲೂಬಾರದು ಇಲ್ಲವೆ ಕತ್ತರಿಸದಿದ್ದ ದ್ರಾಕ್ಷಿಬಳ್ಳಿಗಳಲ್ಲಿ ದ್ರಾಕ್ಷಿಹಣ್ಣುಗಳನ್ನು ಕೂಡಿಸಲೂಬಾರದು.</verse>
				<verse number="12">ಏಕೆಂದರೆ ಅದು ಜೂಬಿಲಿ. ಅದು ನಿಮಗೆ ಪರಿಶುದ್ಧವಾಗಿರುವುದು. ಹೊಲದೊಳಗಿಂದ ಬೆಳೆದ ಹುಟ್ಟುವಳಿಯನ್ನು ನೀವು ತಿನ್ನಬೇಕು.</verse>
				<verse number="13">“ ‘ಜೂಬಿಲಿಯ ಈ ವರ್ಷದಲ್ಲಿ ಪ್ರತಿಯೊಬ್ಬನು ತನ್ನ ಆಸ್ತಿಗೆ ಹಿಂದಿರುಗಬೇಕು.</verse>
				<verse number="14">“ ‘ನೆರೆಯವನಿಗೆ ಏನಾದರೂ ಮಾರಾಟ ಮಾಡಿದ್ದರೆ, ಇಲ್ಲವೆ ನೆರೆಯವನಿಂದ ಕೊಂಡುಕೊಂಡಿದ್ದರೆ, ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು.</verse>
				<verse number="15">ಜೂಬಿಲಿಯ ತರುವಾಯ ವರ್ಷಗಳ ಲೆಕ್ಕದ ಪ್ರಕಾರ ನಿನ್ನ ನೆರೆಯವನಿಂದ ಕೊಂಡುಕೊಳ್ಳಬೇಕು. ಫಲದ ವರ್ಷಗಳ ಪ್ರಕಾರ ಅವನು ನಿನಗೆ ಮಾರಾಟಮಾಡಬೇಕು.</verse>
				<verse number="16">ವರ್ಷಗಳು ಹೆಚ್ಚಿದಂತೆಯೇ ಫಲದ ಬೆಲೆಯನ್ನೂ ಹೆಚ್ಚಿಸಬೇಕು. ವರ್ಷಗಳು ಕಡಿಮೆಯಿರುವಂತೆಯೇ ಫಲದ ಬೆಲೆಯನ್ನು ಕಡಿಮೆ ಮಾಡಬೇಕು. ಫಲದ ವರ್ಷಗಳ ಸಂಖ್ಯೆಗನುಸಾರವಾಗಿಯೇ ಅವನು ನಿನಗೆ ಮಾರಾಟಮಾಡಬೇಕು.</verse>
				<verse number="17">ಆದ್ದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು. ಆದರೆ ದೇವರಿಗೆ ನೀನು ಭಯಪಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.</verse>
				<verse number="18">“ ‘ಹೀಗೆ ನೀವು ನನ್ನ ನಿಯಮಗಳನ್ನು ಪಾಲಿಸಬೇಕು, ನನ್ನ ನಿರ್ಣಯಗಳನ್ನು ಕೈಗೊಂಡು ನಡೆಯಬೇಕು. ಆಗ ನೀವು ದೇಶದಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.</verse>
				<verse number="19">ಭೂಮಿಯು ತನ್ನ ಫಲವನ್ನು ಕೊಡುವುದು. ನೀವು ತಿಂದು ತೃಪ್ತರಾಗುವಿರಿ, ಅದರಲ್ಲಿ ಸುರಕ್ಷಿತವಾಗಿ ವಾಸಿಸುವಿರಿ.</verse>
				<verse number="20">ನೀವು, “ನಾವು ಬಿತ್ತುವುದಿಲ್ಲ, ಇಲ್ಲವೆ ನಮ್ಮ ಹುಟ್ಟುವಳಿಯಲ್ಲಿ ಕೂಡಿಸಿಕೊಳ್ಳುವುದಿಲ್ಲ. ಏಳನೆಯ ವರ್ಷದಲ್ಲಿ ನಾವು ಏನು ತಿನ್ನೋಣ,” ಎನ್ನುವಿರಿ.</verse>
				<verse number="21">ಆಗ ನಾನು, “ಆರನೆಯ ವರ್ಷದಲ್ಲಿ ಮೂರು ವರ್ಷಗಳಿಗೆ ಫಲಫಲಿಸುವಂತೆ ನಿಮ್ಮ ಮೇಲೆ ನನ್ನ ಆಶೀರ್ವಾದವನ್ನು ಕೊಡುವೆನು.</verse>
				<verse number="22">ನೀವು ಎಂಟನೆಯ ವರ್ಷದಲ್ಲಿ ಬಿತ್ತಿ, ಅದರ ಫಲವನ್ನು ಒಂಬತ್ತನೆಯ ವರ್ಷದವರೆಗೆ ತಿನ್ನುವಿರಿ. ಅದರ ಫಲ ಬರುವವರೆಗೆ ತಿನ್ನುವಿರಿ, ಅದರ ಫಲ ಬರುವವರೆಗೆ ನೀವು ಸಂಗ್ರಹಿಸಿದ ಹಳೆಯದನ್ನೇ ತಿನ್ನುವಿರಿ,” ಎಂದು ಹೇಳುತ್ತೇನೆ.</verse>
				<verse number="23">“ ‘ಇದಲ್ಲದೆ ಭೂಮಿಯನ್ನು ಎಂದಿಗೂ ಮಾರಬಾರದು. ಏಕೆಂದರೆ ಭೂಮಿಯು ನನ್ನದು. ನನ್ನೊಂದಿಗೆ ನೀವು ಪರಕೀಯರೂ, ಪ್ರವಾಸಿಗಳೂ ಆಗಿದ್ದೀರಿ.</verse>
				<verse number="24">ನಿಮ್ಮ ಸ್ವಾಧೀನದಲ್ಲಿರುವ ನಿಮ್ಮ ಎಲ್ಲಾ ಭೂಮಿಗೆ ಬಿಡುಗಡೆಯನ್ನು ಕೊಡಬೇಕು.</verse>
				<verse number="25">“ ‘ನಿಮ್ಮ ಸಹೋದರನು ಬಡತನದ ನಿಮಿತ್ತವಾಗಿ ತನ್ನ ಸೊತ್ತಿನಲ್ಲಿ ಸ್ವಲ್ಪವನ್ನು ಮಾರಿದರೆ, ಅವನ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.</verse>
				<verse number="26">ಬಿಡಿಸುವ ಬಂಧುವು ಇಲ್ಲದೆ ಹೋದರೆ, ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಂತಾದರೆ,</verse>
				<verse number="27">ಅವನು ಅದನ್ನು ಮಾರಿದ ವರ್ಷಗಳನ್ನು ಲೆಕ್ಕಿಸಿ, ಅದನ್ನು ಮಾರಿದವನಿಗೆ ಮಿಕ್ಕ ಕ್ರಯವನ್ನು ಪೂರ್ತಿಮಾಡಿ, ತನ್ನ ಸ್ವಂತ ಹೊಲವನ್ನು ಸ್ವಾಧೀನಪಡಿಸಿಕೊಳ್ಳಬಹುದು.</verse>
				<verse number="28">ತಿರುಗಿ ಸಲ್ಲಿಸುವುದಕ್ಕೆ ಅವನಿಗೆ ಆಗದಿದ್ದರೆ, ಅವನು ಮಾರಿದ್ದು ಜೂಬಿಲಿಯ ವರ್ಷದವರೆಗೆ ಕೊಂಡುಕೊಂಡವನ ಕೈಯಲ್ಲಿ ಇರಬೇಕು ಮತ್ತು ಸಂಭ್ರಮದ ವರ್ಷದಲ್ಲಿ ಅದು ಬಿಡುಗಡೆಯಾಗಬೇಕು, ಅವನು ತನ್ನ ಸೊತ್ತನ್ನು ಪಡೆಯಬೇಕು.</verse>
				<verse number="29">“ ‘ಇದಲ್ಲದೆ ಒಬ್ಬನು ಗೋಡೆಯುಳ್ಳ ಪಟ್ಟಣದಲ್ಲಿರುವ ನಿವಾಸದ ಮನೆಯನ್ನು ಮಾರಿದರೆ, ಅದನ್ನು ಮಾರಿದ ಒಂದು ಪೂರ್ಣ ವರ್ಷದೊಳಗಾಗಿ ಅದನ್ನು ಬಿಡುಗಡೆ ಮಾಡಬೇಕು. ಒಂದು ಪೂರ್ಣ ವರ್ಷದೊಳಗಾಗಿ ಅದನ್ನು ಬಿಡಿಸಬಹುದು.</verse>
				<verse number="30">ಆದರೆ ವರ್ಷವು ಪೂರ್ಣವಾಗುವುದರೊಳಗಾಗಿ ಅದು ಬಿಡುಗಡೆಯಾಗದಿದ್ದರೆ, ಗೋಡೆಯ ಪಟ್ಟಣದೊಳಗಿರುವ ಆ ಮನೆಯು ಅದನ್ನು ಕೊಂಡುಕೊಂಡವನಿಗೂ ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು. ಜೂಬಿಲಿಯ ವರ್ಷದಲ್ಲಿ ಅದು ಬಿಡುಗಡೆಯಾಗಬಾರದು.</verse>
				<verse number="31">ಆದರೆ ಸುತ್ತಲೂ ಗೋಡೆಗಳಿಲ್ಲದೆ ಹಳ್ಳಿಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಬೇಕು. ಅವುಗಳನ್ನು ಬಿಡಿಸಿಕೊಳ್ಳುವ ಅಧಿಕಾರವಿರುವದು. ಜೂಬಿಲಿಯ ವರ್ಷದಲ್ಲಿ ಅವು ಬಿಡುಗಡೆ ಆಗಬೇಕು.</verse>
				<verse number="32">“ ‘ಲೇವಿಯರ ಪಟ್ಟಣಗಳ ವಿಷಯವಾಗಿಯೂ, ಅವರ ಸ್ವಾಧೀನವಾಗಿರುವ ಪಟ್ಟಣಗಳ ಮನೆಗಳ ವಿಷಯವಾಗಿಯೂ ಲೇವಿಯರು ಯಾವ ಸಮಯದಲ್ಲಿಯಾದರೂ ಬಿಡಿಸಿಕೊಳ್ಳಬಹುದು.</verse>
				<verse number="33">ಲೇವಿಯರಿಂದ ಏನಾದರೂ ಕೊಂಡುಕೊಂಡರೆ, ಕೊಂಡುಕೊಂಡ ಮನೆಯೂ, ಅವನ ಸ್ವಾಸ್ತ್ಯದ ಪಟ್ಟಣವೂ ಜೂಬಿಲಿಯ ವರ್ಷದಲ್ಲಿ ಬಿಡುಗಡೆಯಾಗಬೇಕು. ಏಕೆಂದರೆ ಲೇವಿಯರ ಪಟ್ಟಣಗಳ ಮನೆಗಳು ಇಸ್ರಾಯೇಲರ ಮಧ್ಯದಲ್ಲಿ ಅವರಿಗೆ ಸ್ವಾಧೀನವಾಗಿವೆ.</verse>
				<verse number="34">ಆದರೆ ಅವರ ಪಟ್ಟಣಗಳ ಉಪನಗರಗಳ ಹೊಲವನ್ನು ಮಾರಬಾರದು. ಏಕೆಂದರೆ ಅದು ಅವರಿಗೆ ಶಾಶ್ವತವಾದ ಸೊತ್ತು.</verse>
				<verse number="35">“ ‘ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣವಾಗಿ ಬಿದ್ದುಕೊಂಡರೆ, ಅವನು ಪರಕೀಯನಾಗಿದ್ದರೂ, ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡಬೇಕು.</verse>
				<verse number="36">ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವರಿಗೆ ಭಯಪಡು.</verse>
				<verse number="37">ನೀನು ಅವನಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಬಡ್ಡಿಯನ್ನು ಕೇಳಬಾರದು, ನಿನ್ನ ಆಹಾರವನ್ನು ಲಾಭಕ್ಕಾಗಿ ಸಾಲವಾಗಿ ಕೊಡಬೇಡ.</verse>
				<verse number="38">ನಿನಗೆ ಕಾನಾನ್ ದೇಶವನ್ನು ಕೊಡುವಂತೆಯೂ, ನಿನಗೆ ದೇವರಾಗಿರುವಂತೆಯೂ ನಿನ್ನನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಕರತಂದ ನಿನ್ನ ದೇವರಾಗಿರುವ ಯೆಹೋವ ದೇವರು ನಾನೇ.</verse>
				<verse number="39">“ ‘ನಿನ್ನೊಂದಿಗೆ ವಾಸಿಸುವ ನಿನ್ನ ಸಹೋದರನು ಬಡವನಾಗಿದ್ದು ತನ್ನನ್ನೇ ಮಾರಿಕೊಂಡಿದ್ದರೆ, ದಾಸನ ಹಾಗೆ ಸೇವೆಯನ್ನು ಮಾಡುವಂತೆ ಅವನನ್ನು ನೀನು ಬಲಾತ್ಕರಿಸಬಾರದು.</verse>
				<verse number="40">ಆದರೆ ಕೂಲಿಯಾಳಂತೆಯೂ, ಪ್ರವಾಸಿಯಂತೆಯೂ ಅವನು ನಿನ್ನ ಬಳಿಯಲ್ಲಿ ಇರಲಿ. ಜೂಬಿಲಿ ಸಂವತ್ಸರದವರೆಗೆ ನಿನಗೆ ಸೇವೆಮಾಡಲಿ.</verse>
				<verse number="41">ತರುವಾಯ ಅವನು ನಿನ್ನ ಬಳಿಯಿಂದ ತನ್ನ ಮಕ್ಕಳೊಂದಿಗೆ ಹೊರಟು ತನ್ನ ಕುಟುಂಬಕ್ಕೆ ಹಿಂದಿರುಗಬೇಕು. ತನ್ನ ಪಿತೃಗಳ ಸೊತ್ತಿಗೂ ಅವನು ಹಿಂದಿರುಗಬೇಕು.</verse>
				<verse number="42">ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಾನು ಹೊರಗೆ ಕರತಂದ ಇಸ್ರಾಯೇಲರು ನನ್ನ ಸೇವಕರಾಗಿದ್ದಾರೆ, ದಾಸರನ್ನು ಮಾರುವಂತೆ ಅವರನ್ನು ಮಾರಬಾರದು.</verse>
				<verse number="43">ನೀನು ಕಠಿಣವಾಗಿ ಅವನ ಮೇಲೆ ಅಧಿಕಾರ ಚಲಾಯಿಸಬಾರದು. ನಿನ್ನ ದೇವರಿಗೆ ಭಯಪಡಬೇಕು.</verse>
				<verse number="44">“ ‘ನಿನ್ನ ಸುತ್ತಲೂ ಇರುವ ಇತರ ಜನರು ನಿನಗೆ ದಾಸ ದಾಸಿಯರಾಗಿರುವಂತೆ ಅವರಿಂದ ದಾಸದಾಸಿಯರನ್ನು ನೀನು ಕೊಂಡುಕೊಳ್ಳಬೇಕು.</verse>
				<verse number="45">ಇದಲ್ಲದೆ ನಿನ್ನ ಮಧ್ಯದೊಳಗಿರುವ ಪರಕೀಯ ಪ್ರವಾಸಿಗಳ ಮಕ್ಕಳಿಂದ ಮತ್ತು ನಿನ್ನ ಬಳಿಯಲ್ಲಿರುವ ಅವರ ಕುಟುಂಬಗಳಲ್ಲಿ ದೇಶದೊಳಗೆ ಅವರು ಪಡೆದವರಿಂದ ನೀನು ಕೊಂಡುಕೊಳ್ಳಬಹುದು ಮತ್ತು ಅವರು ನಿನ್ನ ಸ್ವತ್ತಾಗಿರುವರು.</verse>
				<verse number="46">ನಿಮ್ಮ ತರುವಾಯ ಅವರನ್ನು ನಿಮ್ಮ ಮಕ್ಕಳಿಗೆ ಸ್ವತ್ತಾಗುವ ಬಾಧ್ಯತೆಯಾಗಿ ತೆಗೆದುಕೊಳ್ಳಬೇಕು. ಅವರು ಶಾಶ್ವತವಾಗಿ ನಿಮ್ಮ ದಾಸರಾಗಿರುವರು. ಆದರೆ ಇಸ್ರಾಯೇಲರಾದ ನಿಮ್ಮ ಸಹೋದರರಲ್ಲಿ ಒಬ್ಬರ ಮೇಲೊಬ್ಬರು ಕಠಿಣವಾದ ದಬ್ಬಾಳಿಕೆಯನ್ನು ನಡೆಸಬೇಡಿರಿ.</verse>
				<verse number="47">“ ‘ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾಸಿಯ ಸಂಪತ್ತು ಹೆಚ್ಚಾಗಲಾಗಿ ನಿನ್ನ ಸಹೋದರನು ಅವನ ಬಳಿಯಲ್ಲಿ ಬಡವನಾಗಿ ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾಸಿ ಇಲ್ಲವೆ ಪರಕೀಯನ ಸಂತತಿಯಲ್ಲಿ ಹುಟ್ಟಿದವನಿಗೆ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು.</verse>
				<verse number="48">ಅವನ ಸಹೋದರರಲ್ಲಿ ಒಬ್ಬನು ಈಡುಕೊಟ್ಟು ಅವನನ್ನು ವಿಮೋಚಿಸಬಹುದು.</verse>
				<verse number="49">ಅವನ ಚಿಕ್ಕಪ್ಪನಾಗಲಿ ಇಲ್ಲವೆ ಅವನ ಚಿಕ್ಕಪ್ಪನ ಮಗನಾಗಲಿ ಇಲ್ಲವೆ ಅವನ ಕುಟುಂಬದಲ್ಲಿ ಸಮೀಪವಾಗಿರುವ ಸಂಬಂಧಿಕರಲ್ಲಿ ಯಾರಾಗಲಿ ಅವನನ್ನು ವಿಮೋಚಿಸಬಹುದು. ಇಲ್ಲವೆ ಅವನು ಶಕ್ತನಾಗಿದ್ದರೆ ತನ್ನನ್ನು ತಾನೇ ವಿಮೋಚಿಸಿಕೊಳ್ಳಬಹುದು.</verse>
				<verse number="50">ಅವನು ತನ್ನನ್ನು ಮಾರಿಕೊಂಡ ವರುಷ ಮೊದಲುಗೊಂಡು ಮುಂದಿನ ಜೂಬಿಲಿ ಸಂವತ್ಸರದವರೆಗೆ ಅವನೊಂದಿಗೆ ಲೆಕ್ಕಮಾಡಬೇಕು. ಅವನ ಮಾರಾಟದ ಕ್ರಯವು ವರುಷಗಳ ಲೆಕ್ಕದ ಪ್ರಕಾರ ಕೂಲಿಯಾಳಿನ ಸಮಯಕ್ಕೆ ತಕ್ಕಂತೆ ಅವನೊಂದಿಗೆ ಅದು ಇರುವುದು.</verse>
				<verse number="51">ಜೂಬಿಲಿ ಸಂವತ್ಸರದವರೆಗೆ ಇನ್ನು ಬಹಳ ವರುಷಗಳಿದ್ದರೆ ಅವುಗಳ ಪ್ರಕಾರ ತನ್ನ ವಿಮೋಚನೆಯ ಕ್ರಯವನ್ನು ಕೊಡಬೇಕು.</verse>
				<verse number="52">ಜೂಬಿಲಿ ಸಂವತ್ಸರದವರೆಗೆ ಕೆಲವು ವರುಷಗಳು ಮಾತ್ರ ಉಳಿದಿದ್ದರೆ ಅವನೊಂದಿಗೆ ಎಣಿಸಬೇಕು. ಅವನ ವರ್ಷಗಳ ಮೇರೆಗೆ ತನ್ನ ವಿಮೋಚನೆಯ ಕ್ರಯವನ್ನು ತಿರುಗಿ ಅವನಿಗೆ ಸಲ್ಲಿಸಬೇಕು.</verse>
				<verse number="53">ವರ್ಷದ ಕೂಲಿಯಾಳಿನಂತೆ ಅವನ ಬಳಿಯಲ್ಲಿ ಇರಬೇಕು. ಆದರೆ ಯಜಮಾನನು ಅವನನ್ನು ಕಠಿಣವಾಗಿ ನಡೆಸಿಕೊಳ್ಳುತ್ತಿರುವುದನ್ನು ನೀವು ನೋಡುತ್ತಾ ಸುಮ್ಮನಿರಬಾರದು.</verse>
				<verse number="54">“ ‘ಈ ವರುಷಗಳಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ, ಜೂಬಿಲಿ ಸಂವತ್ಸರದಲ್ಲಿ ಅವನು ಮಕ್ಕಳೊಂದಿಗೆ ಬಿಡುಗಡೆಯಾಗಬೇಕು.</verse>
				<verse number="55">ಏಕೆಂದರೆ ಇಸ್ರಾಯೇಲರು ನನ್ನ ದಾಸರು ಈಜಿಪ್ಟ್ ದೇಶದೊಳಗಿಂದ ನಾನು ಹೊರಗೆ ಬರಮಾಡಿದ ಇವರು ನನ್ನ ದಾಸರೇ. ನಿನ್ನ ದೇವರಾದ ಯೆಹೋವ ದೇವರು ನಾನೇ.</verse>
			</chapter>
			<chapter number="26">
				<verse number="1">“ ‘ನೀವು ನಿಮಗಾಗಿ ವಿಗ್ರಹಗಳನ್ನಾಗಲಿ, ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ, ಇಲ್ಲವೆ ನಿಲ್ಲಿಸುವ ಪ್ರತಿಮೆಯನ್ನು ಮಾಡಿಕೊಳ್ಳಬೇಡಿರಿ, ಕಲ್ಲಿನ ವಿಗ್ರಹಗಳನ್ನು ನಿಮ್ಮ ದೇಶದಲ್ಲಿಟ್ಟುಕೊಂಡು ಅದಕ್ಕೆ ಅಡ್ಡಬೀಳಬೇಡಿರಿ. ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.</verse>
				<verse number="2">“ ‘ನನ್ನ ವಿಶ್ರಾಂತಿಯ ದಿನಗಳನ್ನು ನೀವು ಆಚರಿಸಬೇಕು. ನನ್ನ ಪರಿಶುದ್ಧಸ್ಥಳದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನೇ ಯೆಹೋವ ದೇವರು.</verse>
				<verse number="3">“ ‘ನೀವು ನನ್ನ ನಿಯಮಗಳ ಪ್ರಕಾರ ನಡೆದುಕೊಂಡು, ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳಂತೆ ನಡೆದರೆ,</verse>
				<verse number="4">ನಿಮಗೆ ಮಳೆಯನ್ನು ತಕ್ಕ ಕಾಲದಲ್ಲಿ ಸುರಿಸುವೆನು. ಆಗ ಭೂಮಿಯು ಅದರ ಬೆಳೆಯನ್ನು ಕೊಡುವುದು. ಭೂಮಿಯ ಮರಗಳು ಅವುಗಳ ಫಲವನ್ನು ಕೊಡುವವು.</verse>
				<verse number="5">ಕಣ ತುಳಿಸುವ ಕೆಲಸವು ದ್ರಾಕ್ಷಿ ಬೆಳೆಯುವವರೆಗೂ ದ್ರಾಕ್ಷಿ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿಯನ್ನು ತಿಂದು, ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.</verse>
				<verse number="6">“ ‘ನಾನು ದೇಶದಲ್ಲಿ ಶಾಂತಿಯನ್ನು ಕೊಡುವೆನು, ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ. ದೇಶದಲ್ಲಿ ದುಷ್ಟಮೃಗಗಳು ಇಲ್ಲದ ಹಾಗೆ ನಾನು ಮಾಡುವೆನು. ಖಡ್ಗ ನಿಮ್ಮ ದೇಶದಲ್ಲಿ ಹಾದು ಹೋಗುವುದಿಲ್ಲ.</verse>
				<verse number="7">ನೀವು ನಿಮ್ಮ ಶತ್ರುಗಳನ್ನು ಹಿಂದಟ್ಟುವಾಗ, ಅವರು ಖಡ್ಗದಿಂದ ನಿಮ್ಮ ಮುಂದೆ ಬೀಳುವರು.</verse>
				<verse number="8">ನಿಮ್ಮಲ್ಲಿಯ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿಯ ನೂರು ಮಂದಿ, ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ಖಡ್ಗದಿಂದ ನಿಮ್ಮ ಮುಂದೆ ಬೀಳುವರು.</verse>
				<verse number="9">“ ‘ನಾನು ನಿಮ್ಮನ್ನು ಲಕ್ಷಿಸಿ, ನಿಮ್ಮನ್ನು ಅಭಿವೃದ್ಧಿ ಮಾಡಿ, ನಿಮ್ಮನ್ನು ಹೆಚ್ಚಿಸಿ, ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು.</verse>
				<verse number="10">ನೀವು ಹಳೆಯ ಧಾನ್ಯವನ್ನು ತಿಂದು, ಹೊಸದು ಬಂದಾಗ ಹಳೆಯದನ್ನು ಹೊರಗೆ ತರುವಿರಿ.</verse>
				<verse number="11">ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳುವೆನು. ನನ್ನ ಪ್ರಾಣವು ನಿಮ್ಮನ್ನು ತಿರಸ್ಕರಿಸುವುದಿಲ್ಲ.</verse>
				<verse number="12">ನಾನು ನಿಮ್ಮ ಮಧ್ಯದಲ್ಲಿ ನಡೆದು ನಿಮ್ಮ ದೇವರಾಗಿರುವೆನು. ನೀವು ನನ್ನ ಜನರಾಗಿರುವಿರಿ.</verse>
				<verse number="13">ಈಜಿಪ್ಟ್ ದೇಶದವರಿಗೆ ನೀವು ದಾಸರಾಗಿರದ ಹಾಗೆ ಅವರ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ನಿಮ್ಮ ನೊಗದ ಕಟ್ಟುಗಳನ್ನು ಮುರಿದು, ನಿಮ್ಮನ್ನು ತಲೆಯೆತ್ತಿ ನಡೆಯುವಂತೆ ಮಾಡಿದ ನಿಮ್ಮ ದೇವರಾದ ಯೆಹೋವ ದೇವರು ನಾನೇ.</verse>
				<verse number="14">“ ‘ನೀವು ನನ್ನ ಮಾತನ್ನು ಕೇಳದೆ ಎಲ್ಲಾ ಆಜ್ಞೆಗಳ ಪ್ರಕಾರ ನಡೆಯದೆ ಹೋದರೆ,</verse>
				<verse number="15">ನನ್ನ ನಿಯಮಗಳನ್ನು ನೀವು ತಿರಸ್ಕರಿಸಿದರೆ, ನನ್ನ ನಿರ್ಣಯಗಳಿಗೆ ಅಸಹ್ಯಪಟ್ಟರೆ, ನೀವು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ,</verse>
				<verse number="16">ನಾನು ಸಹ ಇದನ್ನು ನಿಮಗೆ ಮಾಡುವೆನು: ನಿಮ್ಮ ಮೇಲೆ ಭೀತಿಯನ್ನು ಉಂಟುಮಾಡುವ, ಕಣ್ಣುಗಳನ್ನು ಕ್ಷೀಣಿಸುವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗುವಂತೆಯೂ ಮಾಡುವ ಕ್ಷಯರೋಗವನ್ನೂ ಚಳಿಜ್ವರವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ಬೀಜವನ್ನು ಬಿತ್ತುವಿರಿ. ಏಕೆಂದರೆ ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.</verse>
				<verse number="17">ನಾನು ನಿಮಗೆ ವಿಮುಖನಾಗಿರುವೆನು. ಆದ್ದರಿಂದ ನೀವು ನಿಮ್ಮ ವೈರಿಗಳಿಂದ ಸೋತುಹೋಗುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗಲೂ ಓಡಿಹೋಗುವಿರಿ.</verse>
				<verse number="18">“ ‘ಹೀಗೂ ನನ್ನ ಮಾತನ್ನು ಕೇಳದೆ ಹೋದರೆ, ನಾನು ನಿಮ್ಮನ್ನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ಶಿಕ್ಷಿಸುವೆನು.</verse>
				<verse number="19">ನಿಮ್ಮ ಬಲದ ಗರ್ವವನ್ನು ಮುರಿದುಹಾಕಿ, ನಿಮ್ಮ ಆಕಾಶವನ್ನು ಕಬ್ಬಿಣದ ಹಾಗೆಯೂ ನಿಮ್ಮ ಭೂಮಿಯನ್ನು ಕಂಚಿನಂತೆಯೂ ಮಾಡುವೆನು.</verse>
				<verse number="20">ಆಗ ನಿಮ್ಮ ಶಕ್ತಿಯು ವ್ಯರ್ಥವಾಗಿ ಮುಗಿದುಹೋಗುವುದು. ಏಕೆಂದರೆ ನಿಮ್ಮ ಭೂಮಿಯು ತನ್ನ ಬೆಳೆಯನ್ನು ಕೊಡದೆ ಇರುವುದು ಭೂಮಿಯ ಮರಗಳು ತಮ್ಮ ಫಲಗಳನ್ನು ಕೊಡುವುದಿಲ್ಲ.</verse>
				<verse number="21">“ ‘ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ, ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ಬಾಧಿಸುವೆನು.</verse>
				<verse number="22">ಕಾಡುಮೃಗಗಳು ನಿಮ್ಮ ಮೇಲೆ ಬರುವಂತೆ ಮಾಡುವೆನು. ಅವು ನಿಮ್ಮನ್ನು ಮಕ್ಕಳಿಲ್ಲದವರನ್ನಾಗಿ ಮಾಡಿ, ನಿಮ್ಮ ದನಗಳನ್ನು ತಿಂದುಬಿಡುವವು. ನಿಮ್ಮನ್ನು ಸ್ವಲ್ಪ ಮಂದಿಯಾಗಿ ಮಾಡುವುವು. ನಿಮ್ಮ ಮಾರ್ಗಗಳು ಹಾಳಾಗಿ ಹೋಗುವುವು.</verse>
				<verse number="23">“ ‘ನನ್ನಿಂದಾಗುವ ಇವುಗಳಿಂದ ನೀವು ಶಿಕ್ಷಿತರಾಗದೆ ನನಗೆ ವಿರೋಧವಾಗಿ ನಡೆದರೆ,</verse>
				<verse number="24">ನಾನು ಸಹ ನಿಮಗೆ ವಿರೋಧವಾಗಿ ನಡೆದು, ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ, ಏಳರಷ್ಟು ಶಿಕ್ಷಿಸುವೆನು.</verse>
				<verse number="25">ಒಡಂಬಡಿಕೆಯನ್ನು ಮುರಿದದ್ದಕ್ಕಾಗಿ, ಮುಯ್ಯಿಗೆ ಮುಯ್ಯಿ ತೀರಿಸುವ ಖಡ್ಗವನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಸೇರಿದಾಗ, ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನಿಮ್ಮನ್ನು ಶತ್ರುವಿನ ಕೈಗೆ ಒಪ್ಪಿಸಲಾಗುವುದು.</verse>
				<verse number="26">ನಾನು ನಿಮ್ಮ ಅನ್ನಾಧಾರವನ್ನು ಮುರಿದುಹಾಕಿದಾಗ, ಹತ್ತು ಸ್ತ್ರೀಯರು ನಿಮ್ಮ ರೊಟ್ಟಿಯನ್ನು ಒಂದೇ ಒಲೆಯಲ್ಲಿ ಸುಟ್ಟು, ತೂಕದ ಪ್ರಕಾರ ನಿಮಗೆ ರೊಟ್ಟಿಯನ್ನು ಕೊಡುವರು. ನೀವು ಅದನ್ನು ತಿನ್ನುವಿರಿ, ನಿಮಗೆ ತೃಪ್ತಿಯಾಗುವುದಿಲ್ಲ.</verse>
				<verse number="27">“ ‘ಇದೆಲ್ಲಾ ಆದರೂ, ನೀವು ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ,</verse>
				<verse number="28">ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು, ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.</verse>
				<verse number="29">ನೀವು ನಿಮ್ಮ ಪುತ್ರಪುತ್ರಿಯರ ಮಾಂಸವನ್ನು ತಿನ್ನುವಿರಿ.</verse>
				<verse number="30">ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಧೂಪವೇದಿಗಳನ್ನು ಕಡಿದುಹಾಕಿ, ನಿಮ್ಮ ಹೆಣಗಳನ್ನು ನಿಮ್ಮ ವಿಗ್ರಹಗಳ ಮೇಲೆ ಹಾಕುವೆನು. ನಿಮ್ಮ ಬಗ್ಗೆ ನಾನು ಅಸಹ್ಯಪಡುವೆನು.</verse>
				<verse number="31">ನಿಮ್ಮ ಪಟ್ಟಣಗಳನ್ನು ನಾನು ಕೆಡವಿಹಾಕಿ, ನಿಮ್ಮ ಪರಿಶುದ್ಧ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಸುವಾಸನೆಗಳನ್ನು ಮೂಸಿ ನೋಡದೆ ಇರುವೆನು.</verse>
				<verse number="32">ನಾನು ದೇಶವನ್ನು ಹಾಳುಮಾಡುವೆನು. ಅದರಲ್ಲಿ ವಾಸವಾಗುವ ನಿಮ್ಮ ಶತ್ರುಗಳೂ ಅದಕ್ಕೆ ಆಶ್ಚರ್ಯಪಡುವರು.</verse>
				<verse number="33">ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ನಿಮ್ಮ ಹಿಂದೆ ಖಡ್ಗವನ್ನು ಬೀಸುವೆನು. ನಿಮ್ಮ ಭೂಮಿ ಹಾಳಾಗಿರುವುದು, ನಿಮ್ಮ ಪಟ್ಟಣಗಳು ನಾಶವಾಗಿರುವುವು.</verse>
				<verse number="34">ಆಗ ನಾಡು ಹಾಳಾಗಿರುವ ಎಲ್ಲಾ ದಿನಗಳಲ್ಲಿಯೂ ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವವರೆಗೂ, ನಾಡು ತನ್ನ ಸಬ್ಬತ್ ಕಾಲವನ್ನು ಅನುಭವಿಸುವುದು. ಆಗ ನೆಲವು ವಿಶ್ರಮಿಸಿಕೊಂಡು ತನ್ನ ವಿಶ್ರಾಂತಿಯ ಕಾಲವನ್ನು ಅನುಭವಿಸುವುದು.</verse>
				<verse number="35">ನೀವು ನಿಮ್ಮ ಶತ್ರುಗಳ ದೇಶದಲ್ಲಿ ವಾಸವಾಗಿದ್ದಾಗ, ಹಾಳುಬಿದ್ದ ನಿಮ್ಮ ನಾಡು ತಾನು ಹೊಂದದ ವಿಶ್ರಾಂತಿಯನ್ನು ಈಗ ಸುದೀರ್ಘವಾಗಿ ಹೊಂದಿಕೊಳ್ಳುವುದು.</verse>
				<verse number="36">“ ‘ನಿಮ್ಮಲ್ಲಿ ಯಾರು ಉಳಿದು ಶತ್ರುಗಳ ದೇಶದಲ್ಲಿ ಇರುವರೋ, ಅವರ ಹೃದಯದಲ್ಲಿ ಭೀತಿಯನ್ನು ಹುಟ್ಟಿಸುವೆನು. ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವುದು. ಖಡ್ಗಕ್ಕೆ ಓಡಿ ಹೋದ ಹಾಗೆ ಓಡಿಹೋಗುವರು.</verse>
				<verse number="37">ಓಡಿಸುವವನಿಲ್ಲದೆ ಒಬ್ಬರ ಮೇಲೊಬ್ಬರು ಖಡ್ಗದ ಭಯದಿಂದಾದ ಹಾಗೆ ಬೀಳುವರು. ನಿಮ್ಮ ಶತ್ರುಗಳಿಗೆದುರಾಗಿ ನಿಂತುಕೊಳ್ಳುವುದು ನಿಮ್ಮಿಂದಾಗದು.</verse>
				<verse number="38">ಜನಾಂಗಗಳೊಳಗೆ ನಾಶವಾಗುವಿರಿ. ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವುದು.</verse>
				<verse number="39">ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು, ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.</verse>
				<verse number="40">“ ‘ಆದರೆ ಅವರು ನನಗೆ ಮಾಡಿದ ತಮ್ಮ ದುಷ್ಕೃತ್ಯದಲ್ಲಿರುವ ತಮ್ಮ ಅಕ್ರಮವನ್ನೂ, ತಮ್ಮ ಪಿತೃಗಳ ಅಕ್ರಮವನ್ನೂ ತಾವು ನನಗೆ ವಿರೋಧವಾಗಿ ನಡೆದುಕೊಂಡದ್ದನ್ನೂ,</verse>
				<verse number="41">ನಾನು ಸಹ ಅವರಿಗೆ ವಿರೋಧವಾಗಿ ನಡೆದುಕೊಂಡು ಅವರನ್ನು ತಮ್ಮ ಶತ್ರುಗಳ ದೇಶದಲ್ಲಿ ಬರಮಾಡಿದ್ದನ್ನೂ ಅರಿಕೆಮಾಡಿದರೆ, ಆಗಲೇ ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆಬಾಗಿ, ಅವರು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಒಪ್ಪಿಕೊಳ್ಳುವುದಾದರೆ,</verse>
				<verse number="42">ನಾನು ಯಾಕೋಬನಿಗೆ, ಇಸಾಕನಿಗೆ ಮತ್ತು ಅಬ್ರಹಾಮನಿಗೆ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ದೇಶವನ್ನು ದಯೆಯಿಂದ ನೆನಪಿಸಿಕೊಳ್ಳುವೆನು.</verse>
				<verse number="43">ಅವರು ಬಿಟ್ಟುಹೋದ ಸ್ವದೇಶವು ಯಾರೂ ಇಲ್ಲದೆ ಹಾಳಾದ ವೇಳೆಯಲ್ಲಿ ತನ್ನ ವಿಶ್ರಾಂತಿಯನ್ನು ಅನುಭವಿಸುವುದು. ಆದರೆ ಅವರು ತಮ್ಮ ಪಾಪಗಳಿಗಾಗಿ ಶಿಕ್ಷೆಯನ್ನು ಅನುಭವಿಸುವರು. ಅದು ಏಕೆಂದರೆ, ಅವರು ನನ್ನ ನ್ಯಾಯಗಳನ್ನು ಹೇಸಿ, ತಮ್ಮ ಹೃದಯಗಳಲ್ಲಿ ನನ್ನ ನಿಯಮಗಳನ್ನು ತಾತ್ಸಾರ ಮಾಡಿದ್ದರಿಂದಲೇ.</verse>
				<verse number="44">ಆದರೂ ಅವರು ತಮ್ಮ ಶತ್ರುಗಳ ದೇಶದಲ್ಲಿರುವಾಗ ಅವರನ್ನು ಧಿಕ್ಕರಿಸದೆ, ಅವರನ್ನು ಅಸಹ್ಯಪಡದೆ, ಅವರನ್ನು ಸಂಪೂರ್ಣವಾಗಿ ನಾಶಮಾಡದೆಯೂ, ಅವರ ಸಂಗಡ ಇರುವ ನನ್ನ ಒಡಂಬಡಿಕೆಯನ್ನು ಮುರಿಯದೆಯೂ ಇರುವೆನು. ಏಕೆಂದರೆ ಅವರ ದೇವರಾಗಿರುವ ಯೆಹೋವ ದೇವರು ನಾನೇ.</verse>
				<verse number="45">ನಾನು ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು, ಅವರಿಗೆ ಹಿತವನ್ನೇ ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದೇ, ಅವರ ಪಿತೃಗಳನ್ನು ಎಲ್ಲಾ ಜನಾಂಗಗಳ ಮುಂದೆ ಈಜಿಪ್ಟಿನಿಂದ ಬರಮಾಡಿದೆನು. ನಾನೇ ಯೆಹೋವ ದೇವರು.’ ”</verse>
				<verse number="46">ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮೂಲಕ ತನಗೂ, ಇಸ್ರಾಯೇಲರಿಗೂ ಮಧ್ಯದಲ್ಲಿ ಇಟ್ಟ ನಿಯಮಗಳೂ, ನ್ಯಾಯಗಳೂ, ಆಜ್ಞಾವಿಧಿಗಳೂ ಇವೇ.</verse>
			</chapter>
			<chapter number="27">
				<verse number="1">ಯೆಹೋವ ದೇವರು ಮಾತನಾಡಿ ಮೋಶೆಗೆ ಹೇಳಿದ್ದೇನೆಂದರೆ,</verse>
				<verse number="2">“ಇಸ್ರಾಯೇಲರ ಸಂಗಡ ನೀನು ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ಒಬ್ಬನು ಪ್ರತ್ಯೇಕವಾಗಿ ಯೆಹೋವ ದೇವರಿಗೆ ಹರಕೆಮಾಡಿ ಪ್ರತಿಷ್ಠಿಸಿಕೊಂಡರೆ, ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕೊಡಬೇಕು.</verse>
				<verse number="3">ನೀನು ನೇಮಿಸಬೇಕಾದ ಕ್ರಯವು ಯಾವುದೆಂದರೆ, ಇಪ್ಪತ್ತರಿಂದ ಅರವತ್ತು ವಯಸ್ಸುಳ್ಳ ಪುರುಷನಿಗೆ ನೀನು ಪವಿತ್ರ ಸ್ಥಳದ ಶೆಕೆಲ್ ಅನುಸಾರವಾಗಿ ನೇಮಿಸುವ ಕ್ರಯವು ಐವತ್ತು ಶೆಕೆಲ್ ಆಗಿರಬೇಕು.</verse>
				<verse number="4">ಹೆಣ್ಣಾಗಿದ್ದರೆ, ನೀನು ನೇಮಿಸುವ ಕ್ರಯವು ಮೂವತ್ತು ಶೆಕೆಲ್ ಆಗಿರಬೇಕು.</verse>
				<verse number="5">ಐದರಿಂದ ಇಪ್ಪತ್ತು ವಯಸ್ಸುಳ್ಳ ಪುರುಷನ ಕ್ರಯವು ಇಪ್ಪತ್ತು ಶೆಕೆಲ್, ಸ್ತ್ರೀ ಕ್ರಯವು ಹತ್ತು ಶೆಕೆಲ್ ಆಗಿರಬೇಕು.</verse>
				<verse number="6">ಒಂದು ತಿಂಗಳಿಂದ ಐದು ವಯಸ್ಸುಳ್ಳ ಹುಡುಗನ ಕ್ರಯವು ಐದು ಶೆಕೆಲ್, ಹುಡುಗಿಯ ಕ್ರಯವು ಮೂರು ಶೆಕೆಲ್ ಆಗಿರಬೇಕು.</verse>
				<verse number="7">ಅರವತ್ತು ವರುಷವೂ, ಅದಕ್ಕೂ ಹೆಚ್ಚಾದ ಪ್ರಾಯವುಳ್ಳ ಪುರುಷನಾಗಿದ್ದರೆ, ನೀನು ನೇಮಿಸುವ ಕ್ರಯವು ಹದಿನೈದು ಶೆಕೆಲ್, ಸ್ತ್ರೀಗೆ ಹತ್ತು ಶೆಕೆಲ್ ಆಗಿರಬೇಕು.</verse>
				<verse number="8">ಆದರೆ ನೀನು ನೇಮಿಸಿದ ಕ್ರಯವನ್ನು ಕೊಡದಷ್ಟು ಅವನು ಬಡವನಾಗಿದ್ದರೆ, ಅವನನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಅವನಿಗೆ ಕ್ರಯವನ್ನು ನೇಮಿಸಬೇಕು. ಪ್ರಮಾಣ ಮಾಡಿದವನ ಸಂಪತ್ತಿಗೆ ತಕ್ಕಂತೆ ಯಾಜಕನು ಅವನಿಗೆ ಕ್ರಯವನ್ನು ನಿರ್ಣಯಿಸಬೇಕು.</verse>
				<verse number="9">“ ‘ಆದರೆ ಯೆಹೋವ ದೇವರಿಗೆ ಸಮರ್ಪಿಸಬೇಕಾದ ಪಶುಗಳ ಜಾತಿಯಲ್ಲಿ ಯಾವುದಾಗಿದ್ದರೂ, ಅವುಗಳಲ್ಲಿ ಯೆಹೋವ ದೇವರಿಗೆ ಕೊಡುವಂಥದ್ದು ಪರಿಶುದ್ಧವಾಗಿರಬೇಕು.</verse>
				<verse number="10">ಅದನ್ನು ಒಳ್ಳೆಯದಕ್ಕೆ ಕೆಟ್ಟದ್ದನ್ನಾಗಲಿ, ಕೆಟ್ಟದ್ದಕ್ಕೆ ಒಳ್ಳೆಯದನ್ನಾಗಲಿ ಬದಲು ಮಾಡಬಾರದು, ಮಾರ್ಪಡಿಸಲೂಬಾರದು. ಅವನು ಗೊತ್ತುಮಾಡಿದ ಒಂದು ಪಶುವಿಗೆ ಮತ್ತೊಂದನ್ನು ಬದಲು ಮಾಡಿದರೆ, ಅದು ಮತ್ತು ಅದರ ಬದಲಾಗಿಟ್ಟ ಪಶು ಇವೆರಡೂ ಯೆಹೋವ ದೇವರಿಗೆ ಪರಿಶುದ್ಧವಾಗಿರಬೇಕು.</verse>
				<verse number="11">ಅದು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಪಶುವು ಅಶುದ್ಧವಾಗಿದ್ದರೆ, ಆ ಪಶುವನ್ನು ಅವನು ಯಾಜಕನ ಮುಂದೆ ನಿಲ್ಲಿಸಬೇಕು.</verse>
				<verse number="12">ಆಗ ಯಾಜಕನು ಅದು ಒಳ್ಳೆಯದೋ, ಕೆಟ್ಟದ್ದೋ ಎಂದು ಅದಕ್ಕೆ ಕ್ರಯ ಕಟ್ಟಬೇಕು. ಯಾಜಕನು ನಿರ್ಧರಿಸಿದ ಕ್ರಯವೇ ಅಂತಿಮ ಕ್ರಯವಾಗಿರಬೇಕು.</verse>
				<verse number="13">ಹರಕೆ ಮಾಡುವವನು ಅದನ್ನು ಹೇಗಾದರೂ ವಿಮೋಚಿಸಬೇಕೆಂದಿದ್ದರೆ, ನೀನು ನಿರ್ಧರಿಸಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಪಾಲನ್ನು ಅದಕ್ಕೆ ಕೂಡಿಸಬೇಕು.</verse>
				<verse number="14">“ ‘ಒಬ್ಬನು ತನ್ನ ಮನೆಯನ್ನು ಯೆಹೋವ ದೇವರಿಗೆ ಪರಿಶುದ್ಧವಾಗಿರಲೆಂದು ಪ್ರತಿಷ್ಠೆಪಡಿಸಿದರೆ, ಯಾಜಕನು ಅದು ಒಳ್ಳೆಯದೋ, ಕೆಟ್ಟದ್ದೋ ಎಂದು ಪರೀಕ್ಷಿಸಿ ಕ್ರಯವನ್ನು ಕಟ್ಟಬೇಕು. ಯಾಜಕನು ನಿರ್ಧರಿಸಿದ ಬೆಲೆಯೇ ಸ್ಥಿರವಾಗಿರಬೇಕು.</verse>
				<verse number="15">ಆದರೆ ಪ್ರತಿಷ್ಠೆ ಪಡಿಸಿದವನು ತನ್ನ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ, ಅವನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೇ ಒಂದು ಭಾಗ ಹಣವನ್ನು ಕೊಡಲಿ, ಆಗ ಅದು ಅವನದಾಗಿರುವುದು.</verse>
				<verse number="16">“ ‘ಒಬ್ಬನು ತನ್ನ ಸ್ವಾಸ್ತ್ಯದ ಹೊಲದಲ್ಲಿ ಏನಾದರೂ ಯೆಹೋವ ದೇವರಿಗೆ ಪ್ರತಿಷ್ಠಿಸಿದರೆ, ಅದರ ಬೀಜದ ಪ್ರಕಾರ ಕ್ರಯ ಕಟ್ಟಬೇಕು. ಒಂದು ಓಮೆರ್ ಜವೆಗೋಧಿಯನ್ನು, ಬೀಜಕ್ಕೆ ಐವತ್ತು ಬೆಳ್ಳಿ ಶೆಕೆಲ್‌ಗಳನ್ನು ಕೊಡಬೇಕಾಗುವುದು.</verse>
				<verse number="17">ಜೂಬಿಲಿ ಸಂವತ್ಸರ ಮೊದಲುಗೊಂಡು ಅವನು ತನ್ನ ಹೊಲವನ್ನು ಪ್ರತಿಷ್ಠಿಸಿದರೆ, ನೀನು ಕಟ್ಟುವ ಕ್ರಯದ ಪ್ರಕಾರ ಅದು ಸ್ಥಿರವಾಗಿರಬೇಕು.</verse>
				<verse number="18">ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪ್ರತಿಷ್ಠೆ ಮಾಡಿದರೆ, ಜೂಬಿಲಿ ಸಂವತ್ಸರದವರೆಗೆ ಮಿಕ್ಕ ವರ್ಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ನಿರ್ಧರಿಸಿ, ಕಟ್ಟಿದ ಕ್ರಯದಿಂದ ಕಳೆಯಬೇಕು.</verse>
				<verse number="19">ಇದಲ್ಲದೆ ಆ ಹೊಲವನ್ನು ಪರಿಶುದ್ಧ ಮಾಡಿದವನು ಅದನ್ನು ಅವನು ವಿಮೋಚಿಸಬೇಕೆಂದಿದ್ದರೆ, ಅವನು ಕಟ್ಟಿದ ಕ್ರಯಕ್ಕಿಂತ ಹೆಚ್ಚಾಗಿ ಐದನೆಯ ಒಂದು ಪಾಲನ್ನು ಕೊಡಬೇಕು. ಆಗ ಅದು ಸ್ಥಿರವಾಗಿರುವುದು.</verse>
				<verse number="20">ಆದರೆ ಅವನು ಹೊಲವನ್ನು ವಿಮೋಚಿಸದೆ ಹೋದರೆ, ಇಲ್ಲವೆ ಮತ್ತೊಬ್ಬನಿಗೆ ಆ ಹೊಲವನ್ನು ಮಾರಿದ್ದರೆ, ಅದನ್ನು ಅನಂತರ ವಿಮೋಚಿಸಕೂಡದು.</verse>
				<verse number="21">ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಬಿಡುಗಡೆಯಾಗುವಾಗ ಆ ಹೊಲವು ಯೆಹೋವ ದೇವರಿಗೆ ಪವಿತ್ರವಾದ ಹೊಲದಂತೆ ಆತನ ಸೊತ್ತಾಗಿಯೇ ಇರಬೇಕು, ಅದು ಯಾಜಕನಿಗೆ ಸಲ್ಲಬೇಕು.</verse>
				<verse number="22">“ ‘ಆದರೆ ತನ್ನ ಹೊಲಗಳಲ್ಲಿ ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಂಥ ಹೊಲವನ್ನು ಯೆಹೋವ ದೇವರಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ,</verse>
				<verse number="23">ಯಾಜಕನು ಅವನಿಗೆ ನೇಮಿಸಿದ ಕ್ರಯದ ಹಣವನ್ನು ಜೂಬಿಲಿ ಸಂವತ್ಸರದವರೆಗೂ ಎಣಿಸಬೇಕು. ಅವನು ಆ ದಿವಸದಲ್ಲಿ ಕಟ್ಟಿದ ಕ್ರಯವನ್ನು ಯೆಹೋವ ದೇವರಿಗೆ ಮೀಸಲಾದದ್ದು ಎಂದು ಭಾವಿಸಿ ಕೊಡಬೇಕು.</verse>
				<verse number="24">ಆ ಹೊಲವು ಯಾರಿಗೆ ಸ್ವಂತವಾಗಿದ್ದು, ಯಾರಿಂದ ಕೊಂಡುಕೊಳ್ಳಲಾಗಿದೆಯೋ ಅದು ಜೂಬಿಲಿ ವರ್ಷದಲ್ಲಿ ಅವರಿಗೇ ಹಿಂದಕ್ಕೆ ಕೊಡಬೇಕು.</verse>
				<verse number="25">ಪವಿತ್ರ ಸ್ಥಳದ ಶೆಕೆಲ್ ಅನುಸಾರವಾಗಿ ನೇಮಿಸುವ ಕ್ರಯವು ಇಪ್ಪತ್ತು ಗೇರಾ ತೂಕದ ಶೆಕೆಲ್ ಮೇರೆಗೆ ನೀವು ಕ್ರಯವನ್ನು ನಿಗದಿಮಾಡಬೇಕು.</verse>
				<verse number="26">“ ‘ಪಶುಗಳ ಚೊಚ್ಚಲ ಮರಿ ಯೆಹೋವ ದೇವರದಾದ್ದರಿಂದ ಅದನ್ನೂ ಹರಕೆಯಾಗಿ ಕೊಡಬಾರದು. ಅದು ಎತ್ತಾಗಲಿ ಇಲ್ಲವೆ ಕುರಿಯಾಗಲಿ, ಅದು ಯೆಹೋವ ದೇವರದೇ.</verse>
				<verse number="27">ಆದರೆ ಅದು ಅಶುದ್ಧ ಪಶುಗಳಲ್ಲಿ ಹುಟ್ಟಿದ್ದಾಗಿದ್ದರೆ, ಹರಕೆ ಮಾಡಿದವನು ನಿರ್ಣಯವಾದ ಬೆಲೆಯೊಂದಿಗೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆಹೋದರೆ ಅದನ್ನು ಕಟ್ಟಿದ ಕ್ರಯದ ಪ್ರಕಾರ ಮಾರಬೇಕು.</verse>
				<verse number="28">“ ‘ಯಾರಾದರೂ ಮನುಷ್ಯನನ್ನಾಗಲಿ, ಪಶುವನ್ನಾಗಲಿ, ಪಿತ್ರಾರ್ಜಿತ ಹೊಲವನ್ನಾಗಲಿ ತನಗಿದ್ದ ಬೇರೆ ಯಾವುದನ್ನಾಗಲಿ ಒಬ್ಬ ಮನುಷ್ಯನು ಯೆಹೋವ ದೇವರಿಗಾಗಿ ಮೀಸಲಾಗಿಟ್ಟಿದ್ದರೆ, ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು. ಮೀಸಲಾಗಿರುವ ಪ್ರತಿಯೊಂದೂ ಯೆಹೋವ ದೇವರಿಗೆ ಮಹಾಪರಿಶುದ್ಧವಾದದ್ದು.</verse>
				<verse number="29">“ ‘ಯೆಹೋವ ದೇವರಿಗೆಂದು ಮೀಸಲಾದದನ್ನು ಯಾರೂ ಕ್ರಯಕೊಟ್ಟು ವಿಮೋಚಿಸಬಾರದು. ಅಂಥವನಿಗೆ ಮರಣವೇ ಆಗಬೇಕು.</verse>
				<verse number="30">“ ‘ಭೂಮಿಯ ಬೀಜದಲ್ಲಾಗಲಿ, ಮರದ ಫಲದಲ್ಲಾಗಲಿ ಹತ್ತನೆಯ ಒಂದು ಪಾಲೆಲ್ಲಾ ಯೆಹೋವ ದೇವರದೇ. ಅದು ಯೆಹೋವ ದೇವರಿಗೆ ಪರಿಶುದ್ಧವಾದದ್ದು.</verse>
				<verse number="31">ಯಾವನಾದರೂ ತನ್ನ ಹತ್ತನೆಯ ಪಾಲುಗಳನ್ನು ವಿಮೋಚಿಸಬೇಕೆಂದಿದ್ದರೆ, ಅದಕ್ಕಿಂತ ಹೆಚ್ಚಾಗಿ ಅದರ ಐದನೆಯ ಒಂದು ಪಾಲನ್ನು ಕೊಡಬೇಕು.</verse>
				<verse number="32">ಇದಲ್ಲದೆ ದನಕುರಿಗಳಲ್ಲಿಯೂ, ಕುರುಬನು ಎಣಿಸುವ ಪಶುಗಳಲ್ಲಿಯೂ ಹತ್ತನೆಯ ಪಾಲು, ಹತ್ತರಲ್ಲಿ ಒಂದು ಯೆಹೋವ ದೇವರಿಗೆ ಪರಿಶುದ್ಧವಾಗಿರುವುದು.</verse>
				<verse number="33">ಆ ಪಶು ಒಳ್ಳೆಯದೋ ಕೆಟ್ಟದ್ದೋ ಎಂದು ಅವನು ವಿಚಾರಿಸಬಾರದು. ಅವನು ಅದನ್ನು ಬದಲಾಯಿಸಬಾರದು. ಯಾರಾದರೂ ಅದನ್ನು ಬದಲಾಯಿಸಿದ್ದಾದರೆ, ಆಗ ಎರಡೂ ಪಶುಗಳು ಯೆಹೋವ ದೇವರಿಗೆ ಸೇರುತ್ತದೆ, ಅದು ಪರಿಶುದ್ಧವಾಗಿರುತ್ತದೆ ಅದನ್ನು ವಿಮೋಚಿಸಬಾರದು.’ ”</verse>
				<verse number="34">ಯೆಹೋವ ದೇವರು ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಇಸ್ರಾಯೇಲರಿಗಾಗಿ ಕೊಟ್ಟ ಆಜ್ಞೆಗಳು ಇವೇ.</verse>
			</chapter>
		</book>
		<book number="4">
			<chapter number="1">
				<verse number="1">ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ನಂತರದ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದೊಳಗೆ ಮೋಶೆಯ ಸಂಗಡ ಹೀಗೆ ಮಾತನಾಡಿದರು:</verse>
				<verse number="2">“ಇಸ್ರಾಯೇಲ್ ಜನಸಮೂಹದ ಗಂಡಸರನ್ನು ಗೋತ್ರ ಹಾಗೂ ಕುಟುಂಬಗಳಿಗೆ ಅನುಗುಣವಾಗಿ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಎಣಿಸಬೇಕು.</verse>
				<verse number="3">ಇಸ್ರಾಯೇಲರಲ್ಲಿ ಸೈನಿಕ ಸೇವೆ ಸಲ್ಲಿಸತಕ್ಕವರನ್ನು ಅಂದರೆ, ಇಪ್ಪತ್ತು ವರ್ಷಕ್ಕಿಂತಲೂ ಹೆಚ್ಚಾದ ವಯಸ್ಸುಳ್ಳ ಎಲ್ಲರನ್ನು ಸೈನ್ಯಸೈನ್ಯವಾಗಿ ನೀನು ಮತ್ತು ಆರೋನನು ಪಟ್ಟಿಮಾಡಬೇಕು.</verse>
				<verse number="4">ಪ್ರತಿಯೊಂದು ಗೋತ್ರದ ಒಬ್ಬೊಬ್ಬ ಮುಖ್ಯಸ್ಥನು ನಿಮಗೆ ಸಹಾಯಕನಾಗಿರಲಿ.</verse>
				<verse number="5">“ನಿಮಗೆ ಸಹಾಯ ಮಾಡಬೇಕಾದ ಪುರುಷರ ಹೆಸರುಗಳು: “ರೂಬೇನ್ ಗೋತ್ರದಿಂದ ಶೆದೇಯೂರನ ಮಗ ಎಲೀಚೂರ್,</verse>
				<verse number="6">ಸಿಮೆಯೋನ್ ಗೋತ್ರದಿಂದ ಚುರೀಷದ್ದೈಯನ ಮಗ ಶೆಲುಮೀಯೇಲ್,</verse>
				<verse number="7">ಯೆಹೂದ ಗೋತ್ರದಿಂದ ಅಮ್ಮೀನಾದಾಬನ ಮಗ ನಹಶೋನ್,</verse>
				<verse number="8">ಇಸ್ಸಾಕರ್ ಗೋತ್ರದಿಂದ ಚೂವಾರನ ಮಗ ನೆತನೆಯೇಲ್,</verse>
				<verse number="9">ಜೆಬುಲೂನ್ ಗೋತ್ರದಿಂದ ಹೇಲೋನನ ಮಗ ಎಲೀಯಾಬ್,</verse>
				<verse number="10">ಯೋಸೇಫನ ಗೋತ್ರದಲ್ಲಿ, ಎಫ್ರಾಯೀಮ್‌ನಿಂದ ಅಮ್ಮೀಹೂದನ ಮಗ ಎಲೀಷಾಮಾ, ಮನಸ್ಸೆ ಗೋತ್ರದಿಂದ ಪೆದಾಚೂರನ ಮಗನಾದ ಗಮಲಿಯೇಲ್,</verse>
				<verse number="11">ಬೆನ್ಯಾಮೀನ್ ಗೋತ್ರದಿಂದ ಗಿದ್ಯೋನಿನ ಮಗನಾದ ಅಬೀದಾನ,</verse>
				<verse number="12">ದಾನ್ ಗೋತ್ರದಿಂದ ಅಮ್ಮೀಷದ್ದೈಯನ ಮಗ ಅಹೀಗೆಜೆರ್,</verse>
				<verse number="13">ಆಶೇರ್ ಗೋತ್ರದಿಂದ ಒಕ್ರಾನನ ಮಗ ಪಗೀಯೇಲ್,</verse>
				<verse number="14">ಗಾದ್ ಗೋತ್ರದಿಂದ ದೆವುಯೇಲನ ಮಗ ಎಲ್ಯಾಸಾಫ್,</verse>
				<verse number="15">ನಫ್ತಾಲಿ ಗೋತ್ರದಿಂದ ಏನಾನನ ಮಗ ಅಹೀರನು.”</verse>
				<verse number="16">ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಪುರಾತನ ಗೋತ್ರಗಳ ನಾಯಕರು. ಇವರು ಇಸ್ರಾಯೇಲಿನ ಗೋತ್ರಗಳ ಪ್ರಮುಖರು.</verse>
				<verse number="17">ಹೆಸರಿನಿಂದ ಸೂಚಿತರಾದ ಈ ಪುರುಷರನ್ನು ಮೋಶೆ ಮತ್ತು ಆರೋನನು ತಮ್ಮ ಜೊತೆ ತೆಗೆದುಕೊಂಡರು.</verse>
				<verse number="18">ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಜನರು ತಮ್ಮ ಗೋತ್ರ ಮತ್ತು ಕುಟುಂಬಗಳ ಅನುಸಾರವಾಗಿ ತಮ್ಮ ವಂಶಾವಳಿಯನ್ನು ನೊಂದಾಯಿಸಿದರು. ಹಾಗೂ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಹೆಚ್ಚಾದ ವಯಸ್ಸಿನವರ ಹೆಸರುಗಳನ್ನು ಒಬ್ಬೊಬ್ಬರಾಗಿ ಪಟ್ಟಿಮಾಡಲಾಯಿತು.</verse>
				<verse number="19">ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಮೋಶೆ ಸೀನಾಯಿ ಮರುಭೂಮಿಯಲ್ಲಿ ಜನಗಣತಿ ಮಾಡಿದನು.</verse>
				<verse number="20">ಇಸ್ರಾಯೇಲಿನ ಚೊಚ್ಚಲ ಮಗ ರೂಬೇನನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.</verse>
				<verse number="21">ರೂಬೇನನ ಗೋತ್ರದಲ್ಲಿ ಎಣಿಕೆಯಾದವರು 46,500 ಜನರು.</verse>
				<verse number="22">ಸಿಮೆಯೋನನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.</verse>
				<verse number="23">ಸಿಮೆಯೋನನ ಗೋತ್ರದಲ್ಲಿ ಎಣಿಕೆಯಾದವರು 59,300 ಜನರು.</verse>
				<verse number="24">ಗಾದನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.</verse>
				<verse number="25">ಗಾದನ ಗೋತ್ರದಲ್ಲಿ ಎಣಿಕೆಯಾದವರು 45,650 ಜನರು.</verse>
				<verse number="26">ಯೆಹೂದ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.</verse>
				<verse number="27">ಯೆಹೂದ ಗೋತ್ರದಲ್ಲಿ ಎಣಿಕೆಯಾದವರು 74,600 ಜನರು.</verse>
				<verse number="28">ಇಸ್ಸಾಕಾರನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.</verse>
				<verse number="29">ಇಸ್ಸಾಕಾರನ ಗೋತ್ರದಲ್ಲಿ ಎಣಿಕೆಯಾದವರು 54,400 ಜನರು.</verse>
				<verse number="30">ಜೆಬುಲೂನನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.</verse>
				<verse number="31">ಜೆಬುಲೂನ್ ಗೋತ್ರದಲ್ಲಿ ಎಣಿಕೆಯಾದವರು 57,400 ಜನರು.</verse>
				<verse number="32">ಯೋಸೇಫನ ಮಕ್ಕಳಾದ ಎಫ್ರಾಯೀಮನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.</verse>
				<verse number="33">ಎಫ್ರಾಯೀಮನ ಗೋತ್ರದಲ್ಲಿ ಎಣಿಕೆಯಾದವರು 40,500 ಜನರು.</verse>
				<verse number="34">ಮನಸ್ಸೆಯ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.</verse>
				<verse number="35">ಮನಸ್ಸೆಯ ಗೋತ್ರದಲ್ಲಿ ಎಣಿಕೆಯಾದವರು 32,200 ಜನರು.</verse>
				<verse number="36">ಬೆನ್ಯಾಮೀನ್ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.</verse>
				<verse number="37">ಬೆನ್ಯಾಮೀನನ ಗೋತ್ರದಲ್ಲಿ ಎಣಿಕೆಯಾದವರು 35,400 ಜನರು.</verse>
				<verse number="38">ದಾನನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.</verse>
				<verse number="39">ದಾನನ ಗೋತ್ರದಲ್ಲಿ ಎಣಿಕೆಯಾದವರು 62,700 ಜನರು.</verse>
				<verse number="40">ಆಶೇರನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.</verse>
				<verse number="41">ಆಶೇರನ ಗೋತ್ರದಲ್ಲಿ ಎಣಿಕೆಯಾದವರು 41,500 ಜನರು.</verse>
				<verse number="42">ನಫ್ತಾಲಿಯ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.</verse>
				<verse number="43">ನಫ್ತಾಲಿಯ ಗೋತ್ರದಲ್ಲಿ ಎಣಿಕೆಯಾದವರು 53,400 ಜನರು.</verse>
				<verse number="44">ಮೋಶೆ, ಆರೋನ್ ಮತ್ತು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ನಾಯಕರು ಲೆಕ್ಕಮಾಡಿದ ಇಸ್ರಾಯೇಲರ ಜನರು ಇವರೇ. ಪ್ರತಿಯೊಬ್ಬರೂ ತಮ್ಮ ತಮ್ಮ ಕುಟುಂಬವನ್ನು ಪ್ರತಿನಿಧಿಸುತ್ತಿದ್ದರು.</verse>
				<verse number="45">ಹೀಗೆ ಇಸ್ರಾಯೇಲರಲ್ಲಿ ಎಣಿಕೆಯಾದವರೆಲ್ಲರೂ ಅವರ ಕುಟುಂಬಗಳ ಪ್ರಕಾರ ಇಪ್ಪತ್ತು ವರ್ಷದವರೂ, ಅದಕ್ಕಿಂತ ಹೆಚ್ಚಾದ ಪ್ರಾಯವುಳ್ಳವರೂ, ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಶಕ್ತರಾದವರೂ ಆಗಿದ್ದರು.</verse>
				<verse number="46">ಎಣಿಕೆಯಾದವರು ಒಟ್ಟು 6,03,550 ಮಂದಿಯಾಗಿದ್ದರು.</verse>
				<verse number="47">ಲೇವಿಯರ ತಂದೆಗಳ ಗೋತ್ರವನ್ನು ಇತರರೊಂದಿಗೆ ಎಣಿಸಲಿಲ್ಲ.</verse>
				<verse number="48">ಇದಲ್ಲದೆ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ:</verse>
				<verse number="49">“ನೀವು ಲೇವಿಯ ಕುಲವನ್ನು ಎಣಿಸಬಾರದು ಅಥವಾ ಇತರ ಇಸ್ರಾಯೇಲರ ಜನಗಣತಿಯಲ್ಲಿ ಅವರನ್ನು ಸೇರಿಸಬಾರದು.</verse>
				<verse number="50">ಆದರೆ ನೀನು ಸಾಕ್ಷಿಯ ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಅದಕ್ಕೆ ಬೇಕಾದ ಎಲ್ಲವನ್ನೂ ನೋಡಿಕೊಳ್ಳಲು ಲೇವಿಯರನ್ನು ನೇಮಿಸು. ಅವರು ಗುಡಾರವನ್ನೂ ಅದರ ಎಲ್ಲಾ ಸಲಕರಣೆಗಳನ್ನೂ ಹೊತ್ತುಕೊಳ್ಳುವರು. ಅದರ ಸೇವೆಮಾಡಿ, ಗುಡಾರದ ಸುತ್ತುಮುತ್ತಲೂ ಇಳಿದುಕೊಳ್ಳಬೇಕು.</verse>
				<verse number="51">ದೇವದರ್ಶನ ಗುಡಾರವು ಹೊರಡುವಾಗ ಲೇವಿಯರು ಅದನ್ನು ತೆಗೆಯಲಿ. ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ. ಬೇರೆ ಯಾವನಾದರೂ ಸಮೀಪಿಸಿದರೆ ಅವನು ಸಾಯಬೇಕು.</verse>
				<verse number="52">ಇಸ್ರಾಯೇಲರು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಧ್ವಜದ ಬಳಿ ಇಳಿದುಕೊಳ್ಳಬೇಕು.</verse>
				<verse number="53">ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದುಕೊಳ್ಳಬೇಕು. ಹೀಗೆ ಇಸ್ರಾಯೇಲರ ಸಭೆಯ ಮೇಲೆ ನನ್ನ ಕೋಪಕ್ಕೆ ಆಸ್ಪದವಿರದು. ಲೇವಿಯರು ಸಭೆಯ ಗುಡಾರ ಕಾಯುವ ಜವಾಬ್ದಾರಿಕೆಯುಳ್ಳವರಾಗಿರಬೇಕು.”</verse>
				<verse number="54">ಇಸ್ರಾಯೇಲರು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಎಲ್ಲವನ್ನು ಮಾಡಿದರು.</verse>
			</chapter>
			<chapter number="2">
				<verse number="1">ಯೆಹೋವ ದೇವರು ಮಾತನಾಡಿ ಮೋಶೆ ಮತ್ತು ಆರೋನನಿಗೆ ಹೇಳಿದ್ದೇನೆಂದರೆ:</verse>
				<verse number="2">“ಇಸ್ರಾಯೇಲರು ಒಬ್ಬೊಬ್ಬರಾಗಿ ಕುಟುಂಬಗಳ ಗುರುತುಗಳ ಪ್ರಕಾರ ತಮ್ಮ ತಮ್ಮ ದಂಡಿನ ಧ್ವಜಗಳ ಬಳಿಯಲ್ಲಿ ಇಳಿದುಕೊಳ್ಳಬೇಕು. ಅವರು ದೇವದರ್ಶನ ಗುಡಾರದ ಎದುರಿನಲ್ಲಿ ಸುತ್ತುಮುತ್ತಲೂ ಇಳಿದುಕೊಳ್ಳಬೇಕು.”</verse>
				<verse number="3">ದೇವದರ್ಶನ ಗುಡಾರದ ಪೂರ್ವದಿಕ್ಕಿನಲ್ಲಿ, ಸೂರ್ಯೋದಯದ ಕಡೆಗೆ ಯೆಹೂದ ದಂಡಿನ ಧ್ವಜದ ಬಳಿಯಲ್ಲಿ ತಮ್ಮ ಸೈನ್ಯಗಳ ಪ್ರಕಾರ ಇಳಿದುಕೊಳ್ಳಬೇಕು. ಯೆಹೂದ ಮಕ್ಕಳಿಗೆ ಅಮ್ಮೀನಾದಾಬನ ಮಗ ನಹಶೋನನು ಸೈನ್ಯಾಧಿಪತಿ.</verse>
				<verse number="4">ಅವನ ಸೈನಿಕರ ಸಂಖ್ಯೆ 74,600 ಮಂದಿ.</verse>
				<verse number="5">ಅವರ ಬಳಿಯಲ್ಲಿ ಇಳಿದುಕೊಳ್ಳುವವರು ಇಸ್ಸಾಕಾರನ ಗೋತ್ರದವರು. ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗ ನೆತನೆಯೇಲ್ ಎಂಬ ಸೈನ್ಯಾಧಿಪತಿ.</verse>
				<verse number="6">ಅವನ ಸೈನಿಕರ ಸಂಖ್ಯೆ 54,400 ಮಂದಿ.</verse>
				<verse number="7">ಅವನ ಬಳಿಯಲ್ಲಿ ಇಳಿದುಕೊಳ್ಳುವವರು ಜೆಬುಲೂನ್ಯನ ಗೋತ್ರದವರು. ಜೆಬುಲೂನ್ಯನ ಮಕ್ಕಳಿಗೆ ಹೇಲೋನನ ಮಗ ಎಲೀಯಾಬನು ಸೈನ್ಯಾಧಿಪತಿ.</verse>
				<verse number="8">ಅವನ ಸೈನಿಕರ ಸಂಖ್ಯೆ 57,400 ಮಂದಿ.</verse>
				<verse number="9">ಯೆಹೂದನ ಪಾಳೆಯದಲ್ಲಿ ಎಣಿಸಲಾದ ಅವರ ಸೈನಿಕರ ಸಂಖ್ಯೆ 1,86,400 ಮಂದಿ. ಅವರು ಮೊದಲು ಹೊರಡತಕ್ಕವರು.</verse>
				<verse number="10">ದಕ್ಷಿಣ ದಿಕ್ಕಿನಲ್ಲಿ: ರೂಬೇನ್ ಕುಲದ ದಂಡಿಗೆ ಸೇರಿದವರು ಅವರವರ ಸೈನ್ಯಗಳ ಪ್ರಕಾರ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ರೂಬೇನನ ಮಕ್ಕಳಿಗೆ ಶೆದೇಯೂರನ ಮಗ ಎಲೀಚೂರನು ಸೈನ್ಯಾಧಿಪತಿ.</verse>
				<verse number="11">ಅವನ ಸೈನಿಕರ ಸಂಖ್ಯೆ 46,500 ಮಂದಿ.</verse>
				<verse number="12">ಅವರ ಬಳಿಯಲ್ಲಿ ಇಳಿದುಕೊಳ್ಳುವವರು ಸಿಮೆಯೋನನ ಗೋತ್ರದವರು. ಸಿಮೆಯೋನನ ಮಕ್ಕಳಿಗೆ ಚುರೀಷದ್ದೈಯನ ಮಗನಾದ ಶೆಲುಮೀಯೇಲನು ಸೈನ್ಯಾಧಿಪತಿ.</verse>
				<verse number="13">ಅವನ ಸೈನಿಕರ ಸಂಖ್ಯೆ 59,300 ಮಂದಿ.</verse>
				<verse number="14">ತರುವಾಯ ಗಾದ್ ಗೋತ್ರದವರು. ಗಾದನ ಮಕ್ಕಳಿಗೆ ದೆವುಯೇಲನ ಮಗ ಎಲ್ಯಾಸಾಫನು ಸೈನ್ಯಾಧಿಪತಿ.</verse>
				<verse number="15">ಅವನ ಸೈನಿಕರ ಸಂಖ್ಯೆ 45,650 ಮಂದಿ.</verse>
				<verse number="16">ರೂಬೇನನ ಪಾಳೆಯದಲ್ಲಿ ಎಣಿಸಲಾದ ಸೈನಿಕರ ಸಂಖ್ಯೆ 1,51,450 ಮಂದಿ. ಇವರು ಎರಡನೆಯ ದಂಡಾಗಿ ಹೊರಡಬೇಕು.</verse>
				<verse number="17">ತರುವಾಯ ದೇವದರ್ಶನ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳಿದುಕೊಳ್ಳುವ ಪ್ರಕಾರವೇ, ತಮ್ಮ ತಮ್ಮ ಕಡೆಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು.</verse>
				<verse number="18">ಎಫ್ರಾಯೀಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವುದು: ಎಫ್ರಾಯೀಮನ ಮಕ್ಕಳಿಗೆ ಅಮ್ಮೀಹೂದನ ಮಗ ಎಲೀಷಾಮಾನು ಸೈನ್ಯಾಧಿಪತಿ.</verse>
				<verse number="19">ಅವನ ಸೈನಿಕರ ಸಂಖ್ಯೆ 40,500 ಮಂದಿ.</verse>
				<verse number="20">ಅವರ ಬಳಿಯಲ್ಲಿ ಮನಸ್ಸೆ ಗೋತ್ರದವರು. ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗ ಗಮಲಿಯೇಲನು ಸೈನ್ಯಾಧಿಪತಿ.</verse>
				<verse number="21">ಅವನ ಸೈನಿಕರ ಸಂಖ್ಯೆ 32,200 ಮಂದಿ.</verse>
				<verse number="22">ತರುವಾಯ ಬೆನ್ಯಾಮೀನ್ ಗೋತ್ರದವರು. ಬೆನ್ಯಾಮೀನನ ಮಕ್ಕಳಿಗೆ ಗಿದ್ಯೋನಿಯ ಮಗ ಅಬೀದಾನನು ಸೈನ್ಯಾಧಿಪತಿ.</verse>
				<verse number="23">ಅವನ ಸೈನಿಕರ ಸಂಖ್ಯೆ 35,400 ಮಂದಿ.</verse>
				<verse number="24">ಎಫ್ರಾಯೀಮನ ಪಾಳೆಯದಲ್ಲಿ ಎಣಿಸಲಾದ ಸೈನಿಕರ ಸಂಖ್ಯೆ 1,08,100 ಮಂದಿ. ಇವರು ಮೂರನೆಯವರಾಗಿ ಹೊರಡತಕ್ಕವರು.</verse>
				<verse number="25">ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವರು: ದಾನನ ಮಕ್ಕಳಿಗೆ ಅಮ್ಮೀಷದ್ದೈಯನ ಮಗ ಅಹೀಗೆಜೆರನು ಸೈನ್ಯಾಧಿಪತಿ.</verse>
				<verse number="26">ಅವನ ಸೈನಿಕರ ಸಂಖ್ಯೆ 62,700 ಮಂದಿ.</verse>
				<verse number="27">ಅವರ ಬಳಿಯಲ್ಲಿ ಇಳಿದುಕೊಳ್ಳುವವರು ಆಶೇರ್ ಗೋತ್ರದವರು. ಆಶೇರನ ಮಕ್ಕಳಿಗೆ ಒಕ್ರಾನನ ಮಗ ಪಗೀಯೇಲನು ಸೈನ್ಯಾಧಿಪತಿ.</verse>
				<verse number="28">ಅವನ ಸೈನಿಕರ ಸಂಖ್ಯೆ 41,500 ಮಂದಿ.</verse>
				<verse number="29">ತರುವಾಯ ನಫ್ತಾಲಿ ಗೋತ್ರದವರು. ನಫ್ತಾಲಿ ಮಕ್ಕಳಿಗೆ ಏನಾನನ ಮಗ ಅಹೀರನು ಸೈನ್ಯಾಧಿಪತಿ.</verse>
				<verse number="30">ಅವನ ಸೈನಿಕರ ಸಂಖ್ಯೆ 53,400 ಮಂದಿ.</verse>
				<verse number="31">ದಾನನ ಪಾಳೆಯದಲ್ಲಿ ಎಣಿಸಲಾದ ಸೈನಿಕರ ಸಂಖ್ಯೆ 1,57,600 ಮಂದಿ. ಅವರು ತಮ್ಮ ಧ್ವಜಗಳ ಪ್ರಕಾರ ಕಡೆಯ ದಂಡಾಗಿ ಹೊರಡತಕ್ಕದ್ದು.</verse>
				<verse number="32">ಇಸ್ರಾಯೇಲರಲ್ಲಿ ತಮ್ಮ ಕುಟುಂಬಗಳ ಪ್ರಕಾರವಾಗಿ ಎಣಿಕೆಯಾದವರು ಇವರೇ. ಪಾಳೆಯದೊಳಗೆ ಅವರವರ ಸೈನ್ಯಗಳ ಪ್ರಕಾರ ಎಣಿಕೆಯಾದವರ ಸಂಖ್ಯೆ 6,03,550 ಮಂದಿ.</verse>
				<verse number="33">ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಲೇವಿಯರು ಇಸ್ರಾಯೇಲರೊಳಗೆ ಎಣಿಕೆಯಾಗಲಿಲ್ಲ.</verse>
				<verse number="34">ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಎಲ್ಲವನ್ನೂ ಮಾಡಿದರು. ಹಾಗೆಯೇ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ಕುಟುಂಬಗಳ ಪ್ರಕಾರವೂ ಪಾಳೆಯವನ್ನು ಹಾಕಿಕೊಳ್ಳುತ್ತಾ ಮುಂದುವರಿಯುತ್ತಿದ್ದರು.</verse>
			</chapter>
			<chapter number="3">
				<verse number="1">ಯೆಹೋವ ದೇವರು ಸೀನಾಯಿ ಪರ್ವತದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿವಸದಲ್ಲಿ ಆರೋನನ ಮತ್ತು ಮೋಶೆಯ ಸಂತತಿಗಳು ಇವೇ.</verse>
				<verse number="2">ಆರೋನನ ಮಕ್ಕಳುಗಳ ಹೆಸರುಗಳು: ಚೊಚ್ಚಲ ಮಗನು ನಾದಾಬ್, ತರುವಾಯ ಅಬೀಹೂ, ಎಲಿಯಾಜರ್ ಮತ್ತು ಈತಾಮಾರ್.</verse>
				<verse number="3">ಯಾಜಕರಾಗಿ ಅಭಿಷೇಕ ಹೊಂದಿದ ಆರೋನನ ಮಕ್ಕಳುಗಳ ಹೆಸರುಗಳು ಇವೇ, ಇವರೇ ಯಾಜಕೋದ್ಯೋಗ ಮಾಡುವುದಕ್ಕೆ ಪ್ರತಿಷ್ಠಿತರಾದವರು.</verse>
				<verse number="4">ಆದರೆ ನಾದಾಬ್ ಮತ್ತು ಅಬೀಹೂ ಎಂಬ ಇಬ್ಬರು ಸೀನಾಯಿ ಮರುಭೂಮಿಯಲ್ಲಿ ಆಜ್ಞಾಪಿಸದೇ ಇದ್ದ ಬೇರೆ ಬೆಂಕಿಯನ್ನು ಅರ್ಪಿಸಿದಾಗ, ಯೆಹೋವ ದೇವರ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ. ಹೀಗೆ ಎಲಿಯಾಜರನು, ಈತಾಮಾರನು ತಮ್ಮ ತಂದೆ ಆರೋನನ ಎದುರಿನಲ್ಲಿ ಯಾಜಕ ಉದ್ಯೋಗವನ್ನು ಮಾಡಿದರು.</verse>
				<verse number="5">ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="6">“ಲೇವಿಯ ಗೋತ್ರವನ್ನು ಹತ್ತಿರ ಕರೆದು, ಯಾಜಕನಾದ ಆರೋನನ ಮುಂದೆ ನಿಲ್ಲಿಸು. ಅವರು ಅವನಿಗೆ ಸಹಾಯ ಮಾಡಲಿ.</verse>
				<verse number="7">ಇದಲ್ಲದೆ ಅವರು ದೇವದರ್ಶನದ ಗುಡಾರದ ಬಳಿಯಲ್ಲಿದ್ದು ದೇವದರ್ಶನದ ಗುಡಾರದ ಸೇವೆಮಾಡುತ್ತಾ ಆರೋನನಿಗಾಗಿಯೂ ಸಮಸ್ತ ಸಮೂಹದವರಿಗಾಗಿಯೂ ಕರ್ತವ್ಯಗಳನ್ನು ನಿರ್ವಹಿಸಬೇಕು.</verse>
				<verse number="8">ಅವರು ದೇವದರ್ಶನದ ಗುಡಾರದ ಎಲ್ಲಾ ಸಲಕರಣೆಗಳನ್ನು ನೋಡಿಕೊಳ್ಳಬೇಕು. ಗುಡಾರದ ಸೇವೆಯನ್ನು ಮಾಡುವ ಮೂಲಕ ಇಸ್ರಾಯೇಲರ ಜವಾಬ್ದಾರಿಗಳನ್ನು ಪೂರೈಸಬೇಕು.</verse>
				<verse number="9">ಲೇವಿಯರನ್ನು ಆರೋನನಿಗೂ ಅವನ ಪುತ್ರರಿಗೂ ಒಪ್ಪಿಸು. ಇಸ್ರಾಯೇಲರೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲಾದವರು ಇವರೇ.</verse>
				<verse number="10">ಇದಲ್ಲದೆ ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನೂ ಅವನ ಪುತ್ರರನ್ನೂ ನೇಮಿಸಬೇಕು. ಪರಕೀಯನು ಸಮೀಪಿಸಿದರೆ ಸಾಯಬೇಕು.”</verse>
				<verse number="11">ಯೆಹೋವ ದೇವರು ಮೋಶೆಗೆ ಹೀಗೆಂದರು:</verse>
				<verse number="12">“ಪ್ರತಿಯೊಬ್ಬ ಇಸ್ರಾಯೇಲಿನ ಮಹಿಳೆಯ ಜೇಷ್ಠ ಮಗನಿಗೆ ಬದಲಾಗಿ ಇಸ್ರಾಯೇಲರೊಳಗಿಂದ ಲೇವಿಯರನ್ನು ತೆಗೆದುಕೊಂಡಿದ್ದೇನೆ. ಲೇವಿಯರು ನನಗೆ ಸೇರಿದವರು.</verse>
				<verse number="13">ಏಕೆಂದರೆ ಜೇಷ್ಠರಾದವರೆಲ್ಲರೂ ನನ್ನವರೇ. ನಾನು ಈಜಿಪ್ಟ್ ದೇಶದಲ್ಲಿ ಜೇಷ್ಠರಾದವುಗಳನ್ನೆಲ್ಲಾ ಹೊಡೆದ ದಿವಸದಲ್ಲಿ ನಾನು ಇಸ್ರಾಯೇಲರಲ್ಲಿ ಪುರುಷರಾಗಲಿ, ಪಶುಗಳಾಗಲಿ ಚೊಚ್ಚಲಾದ ಪ್ರತಿಯೊಂದನ್ನು ನನಗಾಗಿ ಪ್ರತ್ಯೇಕಿಸಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಯೆಹೋವ ದೇವರು.”</verse>
				<verse number="14">ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ಮೋಶೆಗೆ ಹೇಳಿದ್ದೇನೆಂದರೆ:</verse>
				<verse number="15">“ಲೇವಿಯರನ್ನು ಕುಟುಂಬಗಳಾಗಿಯೂ, ಗೋತ್ರಗಳಾಗಿಯೂ ಎಣಿಕೆ ಮಾಡು. ಒಂದು ತಿಂಗಳು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರನ್ನೂ ನೀನು ಎಣಿಸು,” ಎಂದರು.</verse>
				<verse number="16">ಆಗ ಮೋಶೆಯು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಮಾತಿನ ಪ್ರಕಾರವಾಗಿ ಎಣಿಸಿದನು.</verse>
				<verse number="17">ಲೇವಿಯ ಪುತ್ರರ ಹೆಸರುಗಳು: ಗೇರ್ಷೋನ್, ಕೊಹಾತ್ ಮತ್ತು ಮೆರಾರೀ.</verse>
				<verse number="18">ಗೇರ್ಷೋನ್ ಗೋತ್ರದವರು: ಲಿಬ್ನೀ ಹಾಗೂ ಶಿಮ್ಮೀ.</verse>
				<verse number="19">ಕೊಹಾತನ ಗೋತ್ರದವರು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.</verse>
				<verse number="20">ಮೆರಾರೀಯ ಗೋತ್ರದವರು: ಮಹ್ಲೀ ಮತ್ತು ಮೂಷೀ ಎಂಬವರು. ಗೋತ್ರ ಕುಟುಂಬಗಳ ಪ್ರಕಾರವಾಗಿ ಇವರೇ ಲೇವಿ ವಂಶದವರು.</verse>
				<verse number="21">ಗೇರ್ಷೋನ್ ವಂಶಕ್ಕೆ ಸೇರಿದ ಲಿಬ್ನೀಯ ಕುಟುಂಬವೂ ಶಿಮ್ಮೀಯ ಕುಟುಂಬದವರೂ ಇದ್ದರು.</verse>
				<verse number="22">ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಅವರ ಎಲ್ಲಾ ಗಂಡಸರ ಸಂಖ್ಯೆಯ ಪ್ರಕಾರ ಎಣಿಕೆಯಾದವರು 7,500 ಮಂದಿ.</verse>
				<verse number="23">ಗೇರ್ಷೋನ್ಯರ ಕುಟುಂಬಗಳು ದೇವದರ್ಶನದ ಗುಡಾರದ ಹಿಂದುಗಡೆ ಪಶ್ಚಿಮದ ಕಡೆಗೆ ಇಳಿದುಕೊಳ್ಳಬೇಕು.</verse>
				<verse number="24">ಗೇರ್ಷೋನ್ಯರ ಗೋತ್ರಗಳ ಮುಖ್ಯಸ್ಥನು ಲಾಯೇಲನ ಮಗ ಎಲ್ಯಾಸಾಫ್.</verse>
				<verse number="25">ದೇವದರ್ಶನದ ಗುಡಾರದ ಉಪಕರಣಗಳಲ್ಲಿ ಗೇರ್ಷೋನನ ವಂಶದವರು ನೋಡಿಕೊಳ್ಳಬೇಕಾದವುಗಳು ಯಾವವೆಂದರೆ: ಗುಡಾರ, ಅದರ ಮೇಲಿನ ಡೇರೆಯ ಬಟ್ಟೆ, ಅದರ ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಲ್ಲಿರುವ ಪರದೆ,</verse>
				<verse number="26">ಗುಡಾರದ ಮತ್ತು ಬಲಿಪೀಠದ ಸುತ್ತಲಿರುವ ಅಂಗಳದ ತೆರೆಗಳು, ಅಂಗಳದ ಬಾಗಿಲಿನ ಪರದೆ ಮತ್ತು ಅವುಗಳ ಹಗ್ಗಗಳು. ಇಂತಹ ಎಲ್ಲಾ ವಿಧವಾದ ಸೇವೆಯನ್ನು ಗೇರ್ಷೋನ್ಯರು ಮಾಡಬೇಕಾಗಿತ್ತು.</verse>
				<verse number="27">ಅಮ್ರಾಮಿಯರು, ಇಚ್ಹಾರರು, ಹೆಬ್ರೋನಿಯರು, ಉಜ್ಜೀಯೇಲರು; ಇವು ಕೊಹಾತನ ಕುಟುಂಬಗಳು.</verse>
				<verse number="28">ಕೊಹಾತ್ಯರಲ್ಲಿ ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 8,600 ಮಂದಿ. ಇವರು ಪರಿಶುದ್ಧ ಸ್ಥಳವನ್ನು ನೋಡಿಕೊಳ್ಳುತ್ತಿದ್ದರು.</verse>
				<verse number="29">ಕೊಹಾತ್ಯರ ಗೋತ್ರಗಳವರು ಪರಿಶುದ್ಧ ಸ್ಥಳವನ್ನು ಕಾಯುವ ಜವಾಬ್ದಾರಿಕೆ ಹೊಂದಿದ್ದರು. ಅವರು ಗುಡಾರದ ಬಳಿಯಲ್ಲಿ ದಕ್ಷಿಣದ ಕಡೆಗೆ ಇಳಿದುಕೊಳ್ಳಬೇಕು.</verse>
				<verse number="30">ಉಜ್ಜೀಯೇಲನ ಪುತ್ರನಾದ ಎಲೀಚಾಫಾನನು ಕೊಹಾತ್ಯರ ಕುಟುಂಬಗಳ ನಾಯಕನು.</verse>
				<verse number="31">ಅವರು ನೋಡಿಕೊಳ್ಳಬೇಕಾಗಿದ್ದವುಗಳು ಯಾವವೆಂದರೆ: ಮಂಜೂಷ, ಮೇಜು, ದೀಪಸ್ತಂಭ, ವೇದಿಕೆಗಳು, ದೇವಸ್ಥಾನದ ಸೇವೋಪಕರಣಗಳು ಹಾಗೂ ಒಳಗಣ ಪರದೆ. ಇಂಥ ಎಲ್ಲಾ ವಿಧವಾದ ಸೇವೆಯನ್ನು ಅವರು ಮಾಡಬೇಕಾಗಿತ್ತು.</verse>
				<verse number="32">ಇದಲ್ಲದೆ ಯಾಜಕನಾಗಿರುವ ಆರೋನನ ಮಗ ಎಲಿಯಾಜರನು ಲೇವಿಯರ ಮತ್ತೊಬ್ಬ ನಾಯಕನಾಗಿದ್ದನು. ಪರಿಶುದ್ಧಸ್ಥಳದ ಜವಾಬ್ದಾರಿಕೆಯುಳ್ಳವನ ಮೇಲೆ ವಿಚಾರಕನು ಅವನೇ.</verse>
				<verse number="33">ಮೆರಾರೀಯ ಮಹ್ಲೀಯರ ಹಾಗೂ ಮೂಷೀಯರ ಗೋತ್ರಗಳಿಗೆ ಸಂಬಂಧಪಟ್ಟವನು. ಇವು ಮೆರಾರೀ ಗೋತ್ರಗಳು.</verse>
				<verse number="34">ಅವರಲ್ಲಿ ಎಣಿಕೆಯಾದವರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 6,200 ಮಂದಿ.</verse>
				<verse number="35">ಅಬೀಹೈಲನ ಮಗ ಜುರೀಯೇಲನು ಮೆರಾರೀ ಗೋತ್ರದ ಮುಖ್ಯಸ್ಥನು. ಅವರು ದೇವದರ್ಶನ ಗುಡಾರದ ಬಳಿಯಲ್ಲಿ ಉತ್ತರ ದಿಕ್ಕಿನ ಕಡೆಗೆ ಇಳಿದುಕೊಳ್ಳಬೇಕು.</verse>
				<verse number="36">ಮೆರಾರೀ ಗೋತ್ರದವರು ದೇವದರ್ಶನ ಗುಡಾರದ ಹಲಗೆ, ಅಗುಳಿ, ಕಂಬ, ಕುಣಿಕೆ, ಅದರ ಎಲ್ಲಾ ಸಲಕರಣೆಗಳು, ಅದರ ಎಲ್ಲಾ ಸೇವೆಯೂ</verse>
				<verse number="37">ಅಂಗಳದ ಸುತ್ತಮುತ್ತಲಿರುವ ಕಂಬಗಳೂ ಅವುಗಳ ಕುಣಿಕೆಗಳೂ ಅವುಗಳ ಗೂಟಗಳೂ ಅವುಗಳ ಹಗ್ಗಗಳೂ ಇವೆಲ್ಲವುಗಳ ಮೇಲ್ವಿಚಾರಣೆ ಮಾಡಬೇಕು.</verse>
				<verse number="38">ದೇವದರ್ಶನ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ದೇವದರ್ಶನದ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳಿದುಕೊಳ್ಳುವವರು ಮೋಶೆ, ಆರೋನ್ ಮತ್ತು ಅವನ ಪುತ್ರರು. ಇವರು ಇಸ್ರಾಯೇಲರಿಗಾಗಿ ಪರಿಶುದ್ಧಸ್ಥಳದ ಮೇಲ್ವಿಚಾರಣೆ ಮಾಡುವವರು. ಬೇರೆ ಯಾರಾದರೂ ಸಮೀಪಿಸಿದರೆ, ಅವರಿಗೆ ಮರಣಶಿಕ್ಷೆ ಆಗಬೇಕು.</verse>
				<verse number="39">ಮೋಶೆಯೂ ಆರೋನನೂ ಯೆಹೋವ ದೇವರ ಆಜ್ಞೆಯ ಪ್ರಕಾರ, ಕುಟುಂಬಗಳ ಪ್ರಕಾರ ಲೆಕ್ಕಮಾಡಿದ ಎಲ್ಲಾ ಲೇವಿಯರು ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 22,000 ಮಂದಿ.</verse>
				<verse number="40">ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ಇಸ್ರಾಯೇಲರಲ್ಲಿರುವ ಜೇಷ್ಠಪುತ್ರರಲ್ಲಿ ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರ ಲೆಕ್ಕವನ್ನು ತೆಗೆದುಕೋ.</verse>
				<verse number="41">ಇಸ್ರಾಯೇಲರಲ್ಲಿರುವ ಜೇಷ್ಠರಾದವರೆಲ್ಲರಿಗೆ ಬದಲಾಗಿ ಲೇವಿಯರನ್ನೂ ಇಸ್ರಾಯೇಲರ ಪಶುಗಳಲ್ಲಿರುವ ಸಕಲ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನೂ ನನಗೋಸ್ಕರ ತೆಗೆದುಕೋ, ‘ನಾನೇ ಯೆಹೋವ ದೇವರು,’ ” ಎಂದರು.</verse>
				<verse number="42">ಯೆಹೋವ ದೇವರು ತನಗೆ ಆಜ್ಞಾಪಿಸಿದಂತೆ ಮೋಶೆ ಇಸ್ರಾಯೇಲರಲ್ಲಿ ಜೇಷ್ಠರಾಗಿರುವುದೆಲ್ಲವನ್ನು ಎಣಿಸಿದನು.</verse>
				<verse number="43">ಒಂದು ತಿಂಗಳೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಜೇಷ್ಠರಾದವರೆಲ್ಲರ ಒಟ್ಟು ಸಂಖ್ಯೆ 22,273 ಮಂದಿ.</verse>
				<verse number="44">ಯೆಹೋವ ದೇವರು ಮೋಶೆಗೆ ಪುನಃ ಹೇಳಿದ್ದೇನೆಂದರೆ,</verse>
				<verse number="45">“ಇಸ್ರಾಯೇಲರಲ್ಲಿ ಜೇಷ್ಠರಾದವರೆಲ್ಲರಿಗೆ ಬದಲಾಗಿ ಲೇವಿಯರನ್ನು ಮತ್ತು ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನು ತೆಗೆದುಕೋ. ಲೇವಿಯರು ನನ್ನವರಾಗಿರುವರು. ನಾನೇ ಯೆಹೋವ ದೇವರು.</verse>
				<verse number="46">ಇಸ್ರಾಯೇಲರ ಜೇಷ್ಠರಾದವರಲ್ಲಿ ಲೇವಿಯರಿಗಿಂತ ಹೆಚ್ಚಾಗಿರುವ 273 ಮಂದಿಯ ವಿಮೋಚನೆಯ ಕ್ರಯವಾಗಿ</verse>
				<verse number="47">ಒಬ್ಬೊಬ್ಬನಿಗೆ ಐದು ಶೆಕೆಲ್ ತೆಗೆದುಕೋ. ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, ಅಂದರೆ ಇಪ್ಪತ್ತು ಗೇರಾ ತೂಕದ ಶೆಕೆಲ್ ಈ ಪ್ರಕಾರವಾಗಿ ಇದನ್ನು ತೆಗೆದುಕೊಳ್ಳಬೇಕು.</verse>
				<verse number="48">ಅವರೊಳಗೆ ಹೆಚ್ಚಾಗಿರುವವರ ವಿಮೋಚನೆಯ ಕ್ರಯವನ್ನು ಆರೋನನಿಗೂ ಅವನ ಮಕ್ಕಳಿಗೂ ನೀನು ಕೊಡಬೇಕು.”</verse>
				<verse number="49">ಹೀಗೆ ಮೋಶೆಯು ಲೇವಿಯರಿಂದ ವಿಮೋಚಿಸಲಾದವರಿಗೆ ಹೆಚ್ಚು ಜನರ ವಿಮೋಚನೆಯ ಕ್ರಯವಾದ ಹಣವನ್ನು ತೆಗೆದುಕೊಂಡನು.</verse>
				<verse number="50">ಇಸ್ರಾಯೇಲರಲ್ಲಿ ಜೇಷ್ಠರಾದವರಿಂದ ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ ನಿಗದಿಯಾದ 1,365 ಶೆಕೆಲ್‌ಗಳನ್ನು ತೆಗೆದುಕೊಂಡನು.</verse>
				<verse number="51">ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ವಿಮೋಚನೆಯ ಹಣವನ್ನು ಆರೋನನಿಗೂ, ಅವನ ಪುತ್ರರಿಗೂ ಕೊಟ್ಟನು.</verse>
			</chapter>
			<chapter number="4">
				<verse number="1">ಯೆಹೋವ ದೇವರು ಮೋಶೆಯ ಮತ್ತು ಆರೋನನ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="2">“ಲೇವಿಯರೊಳಗೆ ಕೊಹಾತ್ಯರಲ್ಲಿಯ ಕುಟುಂಬಗಳನ್ನು ಗೋತ್ರಗಳನ್ನಾಗಿ ಲೆಕ್ಕಮಾಡು.</verse>
				<verse number="3">ಮೂವತ್ತು ವರ್ಷವಾದವರನ್ನೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಅಂದರೆ ಐವತ್ತು ವರ್ಷದವರವರೆಗೆ ದೇವದರ್ಶನ ಗುಡಾರದಲ್ಲಿ ಕೆಲಸ ಮಾಡುವುದಕ್ಕೆ ಬರುವವರನ್ನು ಲೆಕ್ಕಮಾಡು.</verse>
				<verse number="4">“ದೇವದರ್ಶನದ ಗುಡಾರದಲ್ಲಿ ಕೊಹಾತ್ಯರು ಮಾಡುವ ಸೇವೆ ಯಾವುದೆಂದರೆ, ದೇವದರ್ಶನ ಗುಡಾರದ ಅತಿಪರಿಶುದ್ಧವಾದ ವಸ್ತುಗಳನ್ನು ಕಾಪಾಡುವುದು.</verse>
				<verse number="5">ಜನರು ಹೊರಡುವಾಗ, ಆರೋನನೂ, ಅವನ ಮಕ್ಕಳೂ ಒಳಗೆ ಹೋಗಿ ಪರದೆಯನ್ನು ಇಳಿಸಿ, ಅದರಿಂದ ಒಡಂಬಡಿಕೆಯ ಮಂಜೂಷವನ್ನು ಮುಚ್ಚಿ,</verse>
				<verse number="6">ಅದರ ಮೇಲೆ ಕಡಲುಹಂದಿಯ ಚರ್ಮದ ಹೊದಿಕೆಯನ್ನು ಹೊದಿಸಬೇಕು. ಅದರ ಮೇಲ್ಭಾಗದಲ್ಲಿ ಪೂರ್ಣವಾದ ನೀಲಿವಸ್ತ್ರವನ್ನು ಹಾಸಿ, ಕೋಲುಗಳನ್ನು ಅದರ ಸ್ಥಳದಲ್ಲಿ ಇಡಬೇಕು.</verse>
				<verse number="7">“ಸಮ್ಮುಖದ ರೊಟ್ಟಿಯ ಮೇಜಿನ ಮೇಲೆ ಅವರು ನೀಲಿವಸ್ತ್ರವನ್ನು ಹಾಸಿ, ಅದರ ಮೇಲೆ ಪಾತ್ರೆಗಳನ್ನು, ಸೌಟುಗಳನ್ನು, ಬೋಗುಣಿಗಳನ್ನು ಮತ್ತು ಪಾನಾರ್ಪಣೆಯ ಹೂಜಿಗಳನ್ನು ಇಡಬೇಕು. ನಿತ್ಯಾರ್ಪಣೆಯ ರೊಟ್ಟಿಯನ್ನು ಅದರ ಮೇಲೆ ಇಡಬೇಕು.</verse>
				<verse number="8">ಅವೆಲ್ಲವುಗಳ ಮೇಲೆ ಕಡುಗೆಂಪಾದ ವಸ್ತ್ರವನ್ನು ಹಾಸಿ, ಅದನ್ನು ಕಡಲುಹಂದಿಯ ಚರ್ಮಗಳ ಹೊದಿಕೆಯಿಂದ ಹೊದಿಸಿ, ಅದರ ಕೋಲುಗಳನ್ನು ಸರಿಯಾದ ಸ್ಥಳದಲ್ಲಿ ಇಡಬೇಕು.</verse>
				<verse number="9">“ಇದಲ್ಲದೆ ಅವರು ನೀಲಿವಸ್ತ್ರವನ್ನು ತೆಗೆದುಕೊಂಡು, ಅದರಿಂದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ, ಅದರ ಬತ್ತಿ ಕತ್ತರಿಸುವ ಸಲಕರಣೆಗಳನ್ನೂ, ಅದರ ಬಟ್ಟಲುಗಳನ್ನೂ, ಅದಕ್ಕೆ ಸೇವೆ ಮಾಡುವ ಸಕಲ ಎಣ್ಣೆಯ ಪಾತ್ರೆಗಳನ್ನೂ ಮುಚ್ಚಬೇಕು.</verse>
				<verse number="10">ಅವರು ಅದನ್ನೂ, ಅದರ ಎಲ್ಲಾ ಸಲಕರಣೆಗಳನ್ನೂ ಕಡಲುಹಂದಿಯ ಚರ್ಮಗಳ ಮುಚ್ಚಳದೊಳಗೆ ಇಟ್ಟು, ಅಡ್ಡ ದಂಡಕ್ಕೆ ಕಟ್ಟಬೇಕು.</verse>
				<verse number="11">“ಇದಲ್ಲದೆ ಬಂಗಾರದ ಬಲಿಪೀಠದ ಮೇಲೆ ಅವರು ನೀಲಿವಸ್ತ್ರವನ್ನು ಹಾಸಿ, ಅದನ್ನು ಕಡಲುಹಂದಿಯ ಚರ್ಮಗಳ ಮುಚ್ಚಳದೊಳಗೆ ಮುಚ್ಚಿ, ಅದರ ಕೋಲುಗಳನ್ನು ಸರಿಯಾದ ಸ್ಥಳದಲ್ಲಿ ಇಡಬೇಕು.</verse>
				<verse number="12">“ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವ ಸೇವೆಯ ಎಲ್ಲಾ ಸಲಕರಣೆಗಳನ್ನು ಅವರು ತೆಗೆದುಕೊಂಡು ನೀಲಿ ವಸ್ತ್ರದಿಂದ ಕಟ್ಟಿ, ಕಡಲುಹಂದಿಯ ಚರ್ಮಗಳ ಹೊದಿಕೆಯಿಂದ ಮುಚ್ಚಿ, ಅಡ್ಡ ದಂಡಕ್ಕೆ ಕಟ್ಟಬೇಕು.</verse>
				<verse number="13">“ಬಲಿಪೀಠದ ಬೂದಿಯನ್ನು ತೆಗೆದು, ಅದರ ಮೇಲೆ ಧೂಮ್ರವರ್ಣದ ವಸ್ತ್ರವನ್ನು ಹಾಸಿ,</verse>
				<verse number="14">ಅದರ ಮೇಲೆ ಸೇವೆ ಮಾಡುವ ಎಲ್ಲಾ ಸಲಕರಣೆಗಳನ್ನು, ಅಗ್ನಿ ಪಾತ್ರೆಗಳನ್ನು, ಮುಳ್ಳುಗಳನ್ನು, ಸಲಿಕೆಗಳನ್ನು, ಬೋಗುಣಿಗಳನ್ನು, ಬಲಿಪೀಠದ ಎಲ್ಲಾ ಸಲಕರಣೆಗಳನ್ನು ಅದರ ಮೇಲಿಟ್ಟು, ಕಡಲುಹಂದಿಯ ಚರ್ಮಗಳ ಹೊದಿಕೆಯನ್ನು ಹಾಕಿ, ಹೊರುವ ಕೋಲುಗಳನ್ನು ಇಡಬೇಕು.</verse>
				<verse number="15">“ಆರೋನನು ಮತ್ತು ಅವನ ಪುತ್ರರು ಪರಿಶುದ್ಧ ಸ್ಥಳವನ್ನೂ, ಪರಿಶುದ್ಧಸ್ಥಳದ ಎಲ್ಲಾ ಸಲಕರಣೆಗಳನ್ನೂ ಮುಚ್ಚಿದ ಮೇಲೆ, ಪಾಳೆಯವು ಹೊರಡುವಾಗ ಕೊಹಾತ್ಯರು ಅದನ್ನು ಹೊತ್ತುಕೊಂಡು ಹೋಗುವುದಕ್ಕೆ ಪ್ರವೇಶಿಸಬೇಕು. ಆದರೆ ಅವರು ಸಾಯದೆ ಇರಬೇಕಾದರೋ, ಪರಿಶುದ್ಧವಾದ ಯಾವುದನ್ನೂ ಮುಟ್ಟಬಾರದು. ದೇವದರ್ಶನದ ಗುಡಾರದಲ್ಲಿ ಕೊಹಾತ್ಯನ ಪುತ್ರರ ಹೊರೆಗಳು ಇವೇ ಆಗಿವೆ.</verse>
				<verse number="16">“ಯಾಜಕನಾದ ಆರೋನನ ಮಗ ಎಲಿಯಾಜರನ ಕೆಲಸ ಯಾವುದೆಂದರೆ, ದೀಪದ ಎಣ್ಣೆಯೂ, ಸುಗಂಧ ಧೂಪವೂ, ನಿತ್ಯದ ಧಾನ್ಯ ಸಮರ್ಪಣೆಯೂ, ಅಭಿಷೇಕದ ತೈಲವೂ, ಸಮಸ್ತ ಗುಡಾರವೂ, ಅದರಲ್ಲಿರುವ ಸಕಲವೂ, ಪರಿಶುದ್ಧ ಸ್ಥಳದಲ್ಲಿರುವ ಅದರ ಸಾಮಗ್ರಿಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.”</verse>
				<verse number="17">ಇದಲ್ಲದೆ ಯೆಹೋವ ದೇವರು ಮೋಶೆ ಆರೋನರ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="18">“ನೀವು ಲೇವಿಯರೊಳಗಿಂದ ಕೊಹಾತ್ಯರ ಗೋತ್ರದ ಕಟುಂಬಗಳು ನಾಶವಾಗಿ ಹೋಗದಂತೆ ನೋಡಿಕೊಳ್ಳಿರಿ.</verse>
				<verse number="19">ಅವರು ಮಹಾಪರಿಶುದ್ಧ ವಸ್ತುಗಳ ಸಮೀಪಕ್ಕೆ ಬರುವಾಗ, ಅವರು ಸಾಯದೆ ಬದುಕುವ ಹಾಗೆ ಹೀಗೆ ಎಚ್ಚರಿಕೆ ವಹಿಸಬೇಕು: ಆರೋನನೂ ಅವನ ಪುತ್ರರೂ ಒಳಗೆ ಪ್ರವೇಶಿಸಿ, ಅವರಲ್ಲಿ ಒಬ್ಬೊಬ್ಬನನ್ನು ಅವನ ಕೆಲಸಕ್ಕೂ ಅವನ ಹೊರೆಯನ್ನೂ ನೇಮಿಸಬೇಕು.</verse>
				<verse number="20">ಆದರೆ ಕೊಹಾತ್ಯರು ದೇವದರ್ಶನದ ಗುಡಾರದ ಒಳಗೆ ಬಂದು, ಒಂದು ಕ್ಷಣವೂ ಆ ಪವಿತ್ರ ವಸ್ತುಗಳನ್ನು ನೋಡಬಾರದು, ನೋಡಿ ಸಾವನ್ನಪ್ಪದಿರಲಿ.”</verse>
				<verse number="21">ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="22">“ಗೇರ್ಷೋನನ ಪುತ್ರರ ಲೆಕ್ಕವನ್ನು ಸಹ ಅವರ ತಂದೆಗಳ ಮನೆಗಳ ಪ್ರಕಾರವಾಗಿಯೂ, ಅವರ ಕುಲಗಳ ಪ್ರಕಾರವಾಗಿಯೂ ತೆಗೆದುಕೊಳ್ಳಬೇಕು.</verse>
				<verse number="23">ಮೂವತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಐವತ್ತು ವರುಷಗಳ ಪ್ರಾಯವುಳ್ಳ ಪುರುಷರನ್ನೂ ದೇವದರ್ಶನ ಗುಡಾರದಲ್ಲಿ ಸೇವೆ ಮಾಡುವುದಕ್ಕೂ, ಅದನ್ನು ಪೂರೈಸುವುದಕ್ಕೂ ಸೇರುವವರೆಲ್ಲರನ್ನೂ ಎಣಿಸು.</verse>
				<verse number="24">“ಗೇರ್ಷೋನ್ಯರ ಕುಟುಂಬಗಳ ಸೇವೆಯೂ ಜವಾಬ್ದಾರಿಕೆ ಯಾವುದೆಂದರೆ,</verse>
				<verse number="25">ಅವರು ಗುಡಾರದ ಪರದೆಗಳನ್ನೂ ದೇವದರ್ಶನ ಗುಡಾರವನ್ನೂ ಅದರ ಹೊದಿಕೆಯನ್ನೂ ಅದರ ಮೇಲಿರುವ ಕಡಲುಹಂದಿಯ ಚರ್ಮಗಳ ಹೊದಿಕೆಯನ್ನೂ ದೇವದರ್ಶನ ಗುಡಾರದ ಬಾಗಿಲಿನ ಪರದೆಯನ್ನೂ</verse>
				<verse number="26">ಅಂಗಳದ ಪರದೆಗಳನ್ನೂ ಗುಡಾರವನ್ನೂ ಬಲಿಪೀಠವನ್ನೂ ಇವುಗಳ ಸುತ್ತಲಿರುವ ಅಂಗಳದ ಬಾಗಿಲಿನ ಪರದೆಯನ್ನೂ ಅವುಗಳ ಹಗ್ಗಗಳನ್ನೂ, ಅವುಗಳ ಸೇವೆಯ ಎಲ್ಲಾ ಸಲಕರಣೆಗಳನ್ನೂ ಹೊತ್ತುಕೊಳ್ಳಬೇಕು. ಅವುಗಳಿಗೆ ಮಾಡತಕ್ಕ ಎಲ್ಲಾ ಸೇವೆಯನ್ನು ಹೀಗೆ ಅವರು ಮಾಡಬೇಕು.</verse>
				<verse number="27">ಗೇರ್ಷೋನ್ಯರು ಆರೋನ್, ಅವನ ಪುತ್ರರ ನಿರ್ದೇಶನದ ಮೇರೆಗೆ ಅವರ ಹೊರೆಹೊರುವದನ್ನು ಮತ್ತು ಇತರ ಕೆಲಸಗಳನ್ನು ಮಾಡಲಿ. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು.</verse>
				<verse number="28">ಗೇರ್ಷೋನ್ಯರ ಕುಟುಂಬದವರು ಸಭೆಯ ಗುಡಾರದಲ್ಲಿ ಮಾಡುವ ಸೇವೆಯೂ ಇದೆ. ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರುವುದು ಅವರಿಗೆ ಅಪ್ಪಣೆಯಾಗಿದೆ.</verse>
				<verse number="29">“ಮೆರಾರೀಯ ಪುತ್ರರನ್ನು ಅವರ ಕುಲಗಳ ಪ್ರಕಾರವಾಗಿಯೂ ಕುಟುಂಬಗಳ ಪ್ರಕಾರವಾಗಿಯೂ ಎಣಿಸಬೇಕು.</verse>
				<verse number="30">ಮೂವತ್ತು ವರುಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಅಂದರೆ ಐವತ್ತು ವರ್ಷಗಳವರೆಗೆ ದೇವದರ್ಶನದ ಗುಡಾರದ ಸೇವೆ ಮಾಡುವುದಕ್ಕಾಗಿ ಒಳಗೆ ಪ್ರವೇಶಿಸುವವರನ್ನೆಲ್ಲಾ ಎಣಿಸಬೇಕು.</verse>
				<verse number="31">ದೇವದರ್ಶನದ ಗುಡಾರದಲ್ಲಿ ಅವರು ಮಾಡತಕ್ಕ ಸಮಸ್ತ ಸೇವೆಯ ಪ್ರಕಾರ ಅವರು ಹೊರುವುದಕ್ಕೆ ನೀಡಿದ ಅಪ್ಪಣೆಯು ಏನೆಂದರೆ: ಗುಡಾರದ ಹಲಿಗೆಗಳೂ ಅದರ ಅಡ್ಡ ದಂಡ ಅದರ ಕಂಬಗಳ ಆಧಾರಗಳೂ ಅದರ ಗದ್ದಿಗೇ ಕಲ್ಲುಗಳೂ</verse>
				<verse number="32">ಸುತ್ತಲಿರುವ ಅಂಗಳದ ಕಂಬಗಳ ಆಧಾರಗಳೂ ಅದರ ಗದ್ದಿಗೇ ಕಲ್ಲುಗಳೂ ಅದರ ಗೂಟಗಳೂ ಅವುಗಳ ಹಗ್ಗಗಳೂ ಅವುಗಳ ಎಲ್ಲಾ ಸಲಕರಣೆಗಳ ಪ್ರಕಾರವಾಗಿಯೂ ಅವುಗಳ ಸಮಸ್ತ ಸೇವೆಯ ಪ್ರಕಾರವಾಗಿಯೂ ಅವರು ಹೊರುವುದಕ್ಕೆ ಕೊಟ್ಟ ಅಪ್ಪಣೆಯ ಸಲಕರಣೆಗಳನ್ನು ನೀವು ಹೆಸರೆಸರಾಗಿ ಎಣಿಸಬೇಕು.</verse>
				<verse number="33">ಮೆರಾರೀಯ ಪುತ್ರರ ಕುಟುಂಬಗಳ ಸೇವೆಯೂ, ದೇವದರ್ಶನದ ಗುಡಾರದಲ್ಲಿ ಅವರು ಮಾಡುವ ಸಮಸ್ತ ಸೇವೆಯೂ ಇದೆ. ಅದು ಯಾಜಕನಾದ ಆರೋನನ ಮಗನಾದ ಈತಾಮಾರನ ಕೈಕೆಳಗೆ ಇರಬೇಕು.”</verse>
				<verse number="34">ಮೋಶೆಯೂ, ಆರೋನನೂ, ಸಭೆಯ ಮುಖ್ಯಸ್ಥನೂ, ಕೊಹಾತ್ಯರ ಪುತ್ರರನ್ನು ಅವರ ಕುಲಗಳ ಪ್ರಕಾರವಾಗಿಯೂ, ಅವರ ಕುಟುಂಬಗಳ ಪ್ರಕಾರವಾಗಿಯೂ</verse>
				<verse number="35">ಮೂವತ್ತು ವರ್ಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರೂ ಎಂದರೆ ಐವತ್ತು ವರ್ಷಗಳವರೆಗೆ ದೇವದರ್ಶನದ ಗುಡಾರದಲ್ಲಿ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು ಎಣಿಸಿದರು.</verse>
				<verse number="36">ಕುಲಗಳ ಪ್ರಕಾರ ಅವರಲ್ಲಿ ಎಣಿಕೆಯಾದವರು 2,750 ಮಂದಿಯಾಗಿದ್ದರು.</verse>
				<verse number="37">ಮೋಶೆಗೆ ಯೆಹೋವ ದೇವರು ಅಪ್ಪಣೆ ಮಾಡಿದ ಹಾಗೆ ಮೋಶೆಯೂ, ಆರೋನನೂ ಎಣಿಸಿದ ಕೊಹಾತ್ಯರ ಕುಟುಂಬಗಳಲ್ಲಿ ಎಣಿಕೆಯಾದವರೂ, ದೇವದರ್ಶನ ಗುಡಾರದಲ್ಲಿ ಸೇವೆ ಮಾಡುವವರೆಲ್ಲರೂ ಇವರೇ.</verse>
				<verse number="38">ಗೇರ್ಷೋನನ ಪುತ್ರರಲ್ಲಿ ಅವರ ಕುಲಗಳ ಪ್ರಕಾರವಾಗಿಯೂ, ಅವರ ಕುಟುಂಬಗಳ ಪ್ರಕಾರವಾಗಿಯೂ ಎಣಿಕೆಯಾದರು.</verse>
				<verse number="39">ಮೂವತ್ತು ವರ್ಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ, ಎಂದರೆ ಐವತ್ತು ವರ್ಷಗಳವರೆಗೆ ದೇವದರ್ಶನ ಗುಡಾರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನೂ,</verse>
				<verse number="40">ಎಂದರೆ ಅವರ ಕುಲಗಳ ಪ್ರಕಾರವಾಗಿಯೂ, ಅವರ ಕುಟುಂಬಗಳ ಪ್ರಕಾರವಾಗಿಯೂ, ಅವರಲ್ಲಿ ಎಣಿಕೆಯಾದವರು 2,630 ಮಂದಿಯಾಗಿದ್ದರು.</verse>
				<verse number="41">ಯೆಹೋವ ದೇವರ ಅಪ್ಪಣೆಯ ಹಾಗೆ ಮೋಶೆಯೂ, ಆರೋನನೂ ಎಣಿಸಿದ ಗೇರ್ಷೋನನ ಪುತ್ರರ ಕುಟುಂಬಗಳಲ್ಲಿ ಎಣಿಕೆಯಾದವರೂ, ದೇವದರ್ಶನದ ಗುಡಾರದಲ್ಲಿ ಸೇವೆ ಮಾಡುವವರೆಲ್ಲರೂ ಇವರೇ.</verse>
				<verse number="42">ಮೆರಾರೀಯ ಪುತ್ರರಲ್ಲಿ ಅವರ ಕುಲಗಳ ಪ್ರಕಾರವಾಗಿಯೂ, ಅವರ ತಂದೆಗಳ ಮನೆಯ ಪ್ರಕಾರವಾಗಿಯೂ ಎಣಿಕೆಯಾದವರು.</verse>
				<verse number="43">ಮೂವತ್ತು ವರ್ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಅಂದರೆ ಐವತ್ತು ವರ್ಷಗಳವರೆಗೆ ದೇವದರ್ಶನ ಗುಡಾರದ ಕೆಲಸಕ್ಕಾಗಿ ಸೇವೆಯಲ್ಲಿ ಸೇರುವವರೆಲ್ಲರನ್ನು</verse>
				<verse number="44">ಎಂದರೆ, ಅವರ ಕುಟುಂಬಗಳ ಪ್ರಕಾರ ಅವರಲ್ಲಿ ಎಣಿಕೆಯಾದವರು 3,200 ಮಂದಿಯಾಗಿದ್ದರು.</verse>
				<verse number="45">ಮೋಶೆಗೆ ಯೆಹೋವ ದೇವರು ಅಪ್ಪಣೆ ಮಾಡಿದ ಹಾಗೆ ಮೋಶೆಯೂ ಆರೋನನೂ ಎಣಿಸಿದ ಮೆರಾರೀಯ ಪುತ್ರರ ಕುಲಗಳಲ್ಲಿ ಎಣಿಕೆಯಾದವರು ಇವರೇ.</verse>
				<verse number="46">ಮೋಶೆಯೂ, ಆರೋನನೂ, ಇಸ್ರಾಯೇಲಿನ ಮುಖ್ಯಸ್ಥರೂ ಎಣಿಸಿದ ಸಮಸ್ತ ಲೇವಿಯರು ಅವರ ಕುಲಗಳ ಪ್ರಕಾರವಾಗಿಯೂ ಅವರ ಕುಟುಂಬಗಳ ಪ್ರಕಾರವಾಗಿಯೂ ಎಣಿಸಿದರು.</verse>
				<verse number="47">ದೇವದರ್ಶನ ಗುಡಾರದಲ್ಲಿ ಕೆಲಸ ಮಾಡುವುದಕ್ಕಾಗಿಯೂ, ಹೊರುವುದಕ್ಕಾಗಿಯೂ ಬರುವವರೆಲ್ಲರೂ ಎಂದರೆ, ಅವರಲ್ಲಿ ಮೂವತ್ತು ವರ್ಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಎಂದರೆ, ಐವತ್ತು ವರ್ಷಗಳವರೆಗೆ</verse>
				<verse number="48">ಎಣಿಕೆಯಾದವರು 8,580 ಮಂದಿ.</verse>
				<verse number="49">ಯೆಹೋವ ದೇವರು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಅವರವರ ಸೇವೆಗಾಗಿಯೂ, ಹೊರುವುದಕ್ಕಾಗಿಯೂ ಜವಾಬ್ದಾರಿಕೆ ಕೊಡಲಾಯಿತು. ಹೀಗೆ ಯೆಹೋವ ದೇವರು ಮೋಶೆಗೆ ಅಪ್ಪಣೆಕೊಟ್ಟ ಪ್ರಕಾರ ಅವರನ್ನು ಎಣಿಸಲಾಯಿತು.</verse>
			</chapter>
			<chapter number="5">
				<verse number="1">ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="2">“ಚರ್ಮರೋಗವಿರುವವರೆಲ್ಲರನ್ನು, ಮೇಹಸ್ರಾವವುಳ್ಳವರೆಲ್ಲರನ್ನು ಮತ್ತು ಹೆಣದ ಸೋಂಕಿನಿಂದ ಅಶುದ್ಧರಾದವರೆಲ್ಲರನ್ನು ಪಾಳೆಯದೊಳಗಿಂದ ಹೊರಗೆ ಕಳುಹಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.</verse>
				<verse number="3">ಸ್ತ್ರೀ ಪುರುಷವೆಂಬ ವ್ಯತ್ಯಾಸವಿಲ್ಲದೆ ಎಲ್ಲರನ್ನು ಹೊರಹಾಕಬೇಕು. ನಾನು ಅವರ ಮಧ್ಯದಲ್ಲಿ ವಾಸಮಾಡುವ ಪಾಳೆಯವನ್ನು ಅವರು ಅಶುದ್ಧ ಮಾಡದ ಹಾಗೆ ನೀವು ಅವರನ್ನು ಪಾಳೆಯದ ಹೊರಗೆ ಕಳುಹಿಸಬೇಕು,” ಎಂಬುದೆ.</verse>
				<verse number="4">ಆಗ ಇಸ್ರಾಯೇಲರು ಹಾಗೆ ಮಾಡಿ, ಅವರನ್ನು ಪಾಳೆಯದ ಹೊರಗೆ ಕಳುಹಿಸಿದರು. ಯೆಹೋವ ದೇವರು ಮೋಶೆಗೆ ಹೇಳಿದ ಪ್ರಕಾರ ಇಸ್ರಾಯೇಲರು ಮಾಡಿದರು.</verse>
				<verse number="5">ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="6">“ಇಸ್ರಾಯೇಲರಿಗೆ ಹೀಗೆ ಹೇಳು: ‘ಪುರುಷನಾದರೂ ಸ್ತ್ರೀಯಾದರೂ ಮತ್ತೊಬ್ಬರಿಗೆ ಮೋಸಮಾಡಿ ಯೆಹೋವ ದೇವರಿಗೆ ಅಪನಂಬಿಗಸ್ತರಾದರೆ, ಆ ವ್ಯಕ್ತಿ ಅಪರಾಧಿ.</verse>
				<verse number="7">ಅವನು ಮಾಡಿದ ಪಾಪವನ್ನು ಅರಿಕೆ ಮಾಡಬೇಕು. ಅವನ ಅಪರಾಧದ ಬದಲುಕೊಟ್ಟು, ಅದರ ಸಂಗಡ ಅದರ ಐದನೆಯ ಪಾಲನ್ನು ಕೂಡಿಸಿ, ಯಾರಿಗೆ ಅಪರಾಧ ಮಾಡಿದರೋ, ಅವರಿಗೆ ಕೊಡಬೇಕು.</verse>
				<verse number="8">ಆದರೆ ಅಪರಾಧಕ್ಕೆ ಬದಲು ಕೊಡುವುದಕ್ಕೆ ಆ ಮನುಷ್ಯನಿಗೆ ಸಂಬಂಧಿಕನು ಇಲ್ಲದಿದ್ದರೆ ಅದು ಯೆಹೋವ ದೇವರಿಗೆ ಸೇರಬೇಕು. ಅದು ದೋಷಪರಿಹಾರಕ್ಕಾಗಿ ಅರ್ಪಿಸಲಾಗುವ ಪ್ರಾಯಶ್ಚಿತ್ತದ ಟಗರು, ಇವೆರಡೂ ಯಾಜಕನಿಗೆ ಸೇರಬೇಕು.</verse>
				<verse number="9">ಇಸ್ರಾಯೇಲರು ತರುವ ಸಕಲ ಪರಿಶುದ್ಧವಾದ ಕಾಣಿಕೆಗಳೆಲ್ಲಾ ಯಾಜಕನಿಗೇ ಸಲ್ಲಬೇಕು.</verse>
				<verse number="10">ಪ್ರತಿ ಮನುಷ್ಯನ ಪರಿಶುದ್ಧವಾದ ಕಾಣಿಕೆಗಳು ಅವನದಾಗಿಯೇ ಆಗಿರುತ್ತವೆ. ಆದರೆ ಯಾಜಕನಿಗೆ ಕೊಟ್ಟದ್ದು ಯಾಜಕರದಾಗುತ್ತದೆ,’ ” ಎಂದು ಹೇಳಿದರು.</verse>
				<verse number="11">ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="12">“ಇಸ್ರಾಯೇಲರಿಗೆ ಹೀಗೆ ಹೇಳು, ‘ಯಾವನ ಹೆಂಡತಿಯಾದರೂ ದಾರಿತಪ್ಪಿ ಅವನಿಗೆ ಅಪನಂಬಿಗಸ್ತಳಾಗಿದ್ದರೆ,</verse>
				<verse number="13">ಇಲ್ಲವೆ ಒಬ್ಬನು ಅವಳ ಸಂಗಡ ಮಲಗಿ ಸಂಗಮ ಮಾಡಿದ್ದು, ಅವಳ ಗಂಡನ ಕಣ್ಣುಗಳಿಗೆ ಮರೆಯಾಗಿದ್ದರೆ, ಅವಳು ಅಶುದ್ಧಳೆಂಬುದು ಗುಪ್ತವಾಗಿದ್ದರೆ, ಅವಳಿಗೆ ವಿರೋಧವಾಗಿ ಸಾಕ್ಷಿ ಇಲ್ಲದೆ, ಅವಳನ್ನು ಹಿಡಿಯದೇ ಇದ್ದರೆ,</verse>
				<verse number="14">ಆಕೆ ಅಶುದ್ಧಳಾಗಿದ್ದಾಳೆಂದು ಆಕೆಯ ಮೇಲೆ ಅಸೂಯೆಗೊಂಡು ಸಂಶಯಪಟ್ಟರೆ, ಆಕೆ ಅಶುದ್ಧಳಾಗದಿದ್ದರೂ, ಆಕೆಯೊಡನೆ ಅಸೂಯೆ ಸಂಶಯ ಹೊಂದಿದರೆ, ಆಗ</verse>
				<verse number="15">ಆ ಮನುಷ್ಯನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ತರಬೇಕು. ಅವಳಿಗೋಸ್ಕರ ಕಾಣಿಕೆಯಾಗಿ ಒಂದು ಓಮರ್ ಜವೆಗೋಧಿಯ ಹಿಟ್ಟನ್ನು ತರಬೇಕು. ಅದರ ಮೇಲೆ ಎಣ್ಣೆಯನ್ನಾದರೂ ಸಾಂಬ್ರಾಣಿಯನ್ನಾದರೂ ಹಾಕಬಾರದು. ಏಕೆಂದರೆ ಅದು ಸಂಶಯವನ್ನು ಸೂಚಿಸುವುದಕ್ಕೂ ಅಪರಾಧವನ್ನು ಹೊರಪಡಿಸುವುದಕ್ಕೂ ಜ್ಞಾಪಕಕ್ಕೆ ತರುವ ಕಾಣಿಕೆಯೂ ಆಗಿದೆ.</verse>
				<verse number="16">“ ‘ಯಾಜಕನು ಅವಳನ್ನು ಸಮೀಪಕ್ಕೆ ಕರೆದು, ಯೆಹೋವ ದೇವರ ಸಮ್ಮುಖದಲ್ಲಿ ನಿಲ್ಲಿಸಬೇಕು.</verse>
				<verse number="17">ಆಗ ಯಾಜಕನು ಪವಿತ್ರ ನೀರನ್ನು ಮಣ್ಣಿನ ಗಡಿಗೆಗಳಲ್ಲಿ ತೆಗೆದುಕೊಳ್ಳಬೇಕು. ಗುಡಾರದ ನೆಲದಲ್ಲಿರುವ ಧೂಳನ್ನು ಯಾಜಕನು ತೆಗೆದುಕೊಂಡು, ಆ ನೀರಿನೊಳಗೆ ಹಾಕಬೇಕು.</verse>
				<verse number="18">ಯಾಜಕನು ಆ ಸ್ತ್ರೀಯನ್ನು ಯೆಹೋವ ದೇವರ ಸಮ್ಮುಖದಲ್ಲಿ ನಿಲ್ಲಿಸಿ, ಆಕೆಯ ತಲೆಯ ಮೇಲಿರುವ ಮುಸುಕನ್ನು ತೆಗೆದು, ಅವಳ ಕೈಗಳಲ್ಲಿ ಸಂಶಯ ಸೂಚಿಸುವ ಕಾಣಿಕೆಯಾದ ನೈವೇದ್ಯದ ಹಿಟ್ಟನ್ನು ಇಡಬೇಕು. ಯಾಜಕನ ಕೈಯಲ್ಲಿ ಶಾಪತರುವ ಕಹಿಯಾದ ನೀರು ಇರಬೇಕು.</verse>
				<verse number="19">ಯಾಜಕನು ಅವಳನ್ನು ಪ್ರಮಾಣ ಮಾಡಿಸಿ, ಸ್ತ್ರೀಗೆ ಹೇಳಬೇಕಾದದ್ದು, “ಮದುವೆಯಾಗಿ ಗಂಡನೊಂದಿಗೆ ಸಂಸಾರ ನಡೆಸುವಾಗ, ಒಬ್ಬ ಪರಪುರುಷನು ನಿನ್ನ ಸಂಗಡ ಮಲಗಿರದಿದ್ದರೆ, ನಿನ್ನ ಗಂಡನನ್ನು ಬಿಟ್ಟು ನೀನು ಜಾರತ್ವ ಮಾಡದೆ ಇದ್ದರೆ, ಶಾಪವನ್ನು ಉಂಟುಮಾಡುವ ಈ ನೀರು ನಿನಗೆ ಯಾವ ಹಾನಿಮಾಡುವುದಿಲ್ಲ.</verse>
				<verse number="20">ಆದರೆ ನೀನು ನಿನ್ನ ಗಂಡನನ್ನು ಬಿಟ್ಟು, ಜಾರತ್ವ ಮಾಡಿ ಅಶುದ್ಧಳಾಗಿದ್ದರೆ, ನಿನ್ನ ಗಂಡನನ್ನು ಬಿಟ್ಟು, ಮತ್ತೊಬ್ಬನು ನಿನ್ನ ಸಂಗಡ ಮಲಗಿದ್ದರೆ,</verse>
				<verse number="21">ಯೆಹೋವ ದೇವರು ನಿನ್ನ ತೊಡೆಯನ್ನು ಕ್ಷೀಣವಾಗುವಂತೆಯೂ ನಿನ್ನ ಹೊಟ್ಟೆಯನ್ನು ಉಬ್ಬುವಂತೆಯೂ ಮಾಡುವನು. ನಿನ್ನ ಜನರು ನಿನ್ನನ್ನು ಶಪಿಸುವರು, ತಿರಸ್ಕರಿಸುವರು.</verse>
				<verse number="22">ಶಪಿಸುವಂಥ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆ ಉಬ್ಬುವಂತೆ, ತೊಡೆಯನ್ನು ಕ್ಷೀಣವಾಗಿ ಹೋಗುವಂತೆ ನಿನ್ನ ಜನನೇಂದ್ರಿಯಗಳು ಬತ್ತಿಹೋಗುವಂತೆ ಮಾಡಲಿ ಎಂದು ಹೇಳಬೇಕು, ಈ ಪ್ರಕಾರ ಯಾಜಕನು ಆ ಸ್ತ್ರೀಯನ್ನು ಶಾಪದ ಪ್ರಮಾಣ ಮಾಡಿಸಬೇಕು.” “ ‘ಅದಕ್ಕೆ ಆ ಸ್ತ್ರೀಯು, “ಆಮೆನ್, ಆಮೆನ್,” ಎಂದು ಹೇಳಬೇಕು.</verse>
				<verse number="23">“ ‘ಇದಲ್ಲದೆ ಯಾಜಕನು ಈ ಶಾಪವನ್ನು ಪುಸ್ತಕದಲ್ಲಿ ಬರೆದು, ಕಹಿಯಾದ ನೀರಿನಿಂದ ತೊಳೆದು,</verse>
				<verse number="24">ಆ ಸ್ತ್ರೀಗೆ ಶಪಿಸುವಂಥಹ ಕಹಿಯಾದ ನೀರನ್ನು ಕುಡಿಸಬೇಕು. ಆಗ ಶಪಿಸುವ ನೀರು ಅವಳಲ್ಲಿ ಸೇರಿ ಕಹಿಯಾಗುವುದು.</verse>
				<verse number="25">ಬಳಿಕ ಯಾಜಕನು ಆ ಸ್ತ್ರೀಯ ಕೈಯಿಂದ ಸಂಶಯ ಸೂಚಕ ಕಾಣಿಕೆಯನ್ನು ತೆಗೆದುಕೊಂಡು, ಆ ಕಾಣಿಕೆಯನ್ನು ಯೆಹೋವ ದೇವರ ಸಮ್ಮುಖದಲ್ಲಿ ನೈವೇದ್ಯ ಮಾಡಿ, ಬಲಿಪೀಠದ ಸಮೀಪಕ್ಕೆ ತರಬೇಕು.</verse>
				<verse number="26">ಆಗ ಯಾಜಕನು ಜ್ಞಾಪಕಾರ್ಥವಾಗಿ ಕಾಣಿಕೆಯಿಂದ ಒಂದು ಹಿಡಿ ತೆಗೆದುಕೊಂಡು, ಬಲಿಪೀಠದ ಮೇಲೆ ಸುಟ್ಟು, ಸ್ತ್ರೀಗೆ ಆ ನೀರನ್ನು ಕುಡಿಸಬೇಕು.</verse>
				<verse number="27">ಆಕೆಗೆ ಆ ನೀರನ್ನು ಕುಡಿಸಿದ ಮೇಲೆ ಆಕೆಯು ಅಶುದ್ಧಳಾಗಿ ತನ್ನ ಗಂಡನಿಗೆ ಅಪರಾಧ ಮಾಡಿದ್ದಾಗಿದ್ದರೆ, ಶಪಿಸುವ ನೀರು ಆಕೆಯೊಳಗೆ ಸೇರಿ ಕಹಿಯಾಗುವುದು. ಅವಳ ಹೊಟ್ಟೆ ಉಬ್ಬಿ, ಅವಳ ತೊಡೆ ಕ್ಷೀಣವಾಗುವುದು. ಆಗ ಆ ಸ್ತ್ರೀ ತನ್ನ ಜನರ ಮಧ್ಯದಲ್ಲಿ ಶಾಪಗ್ರಸ್ತಳಾಗಿರುವಳು.</verse>
				<verse number="28">ಆದರೆ ಆ ಸ್ತ್ರೀ ಅಶುದ್ಧಳಲ್ಲದೆ ಶುದ್ಧಳಾಗಿದ್ದರೆ, ಅವಳು ನಿರಪರಾಧಿಯಾಗಿದ್ದು ಸಂತಾನವನ್ನು ಪಡೆಯುವಳು.</verse>
				<verse number="29">“ ‘ಸಂಶಯ ಪರಿಹಾರದ ನಿಯಮವು ಇದೇ. ಒಬ್ಬ ಹೆಂಡತಿ ತನ್ನ ಗಂಡನನ್ನು ಬಿಟ್ಟು ಜಾರತ್ವ ಮಾಡಿ, ಅಶುದ್ಧಳಾಗಿದ್ದರೆ,</verse>
				<verse number="30">ಅಥವಾ ಪುರುಷನು ಸಂಶಯಗೊಂಡು ಅವನು ತನ್ನ ಹೆಂಡತಿ ಮೇಲೆ ರೋಷಗೊಂಡಿದ್ದರೆ, ಅವನು ತನ್ನ ಹೆಂಡತಿಯನ್ನು ಯೆಹೋವ ದೇವರ ಸಮ್ಮುಖದಲ್ಲಿ ನಿಲ್ಲಿಸಲಿ. ಆಗ ಯಾಜಕನು ಅವಳಿಗೆ ಈ ಸಮಸ್ತ ಆಜ್ಞೆಗಳ ಪ್ರಕಾರ ಮಾಡುವನು.</verse>
				<verse number="31">ಆಗ ಗಂಡನು ನಿರಪರಾಧಿಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು.’ ”</verse>
			</chapter>
			<chapter number="6">
				<verse number="1">ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="2">“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಹೇಳಬೇಕಾದದ್ದೇನೆಂದರೆ: ‘ಪುರುಷನಾದರೂ, ಸ್ತ್ರೀಯಾದರೂ ಯೆಹೋವ ದೇವರಿಗೆ ಪ್ರತ್ಯೇಕಿಸಿಕೊಳ್ಳುವ ಹಾಗೆ ನಾಜೀರ ವ್ರತ ಕೈಗೊಂಡರೆ,</verse>
				<verse number="3">ದ್ರಾಕ್ಷಾರಸಕ್ಕೂ ಮದ್ಯಪಾನಕ್ಕೂ ದೂರವಾಗಿದ್ದು, ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ, ದ್ರಾಕ್ಷಿಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ ಹಸಿಯದಾಗಲಿ, ಒಣಗಿದ್ದಾಗಲಿ ದ್ರಾಕ್ಷಿಹಣ್ಣನ್ನು ತಿನ್ನದೆ ಇರಬೇಕು.</verse>
				<verse number="4">ತಮ್ಮ ನಾಜೀರತನದ ದಿವಸಗಳಲ್ಲೆಲ್ಲಾ ದ್ರಾಕ್ಷಿ ಬೀಜ ಮೊದಲುಗೊಂಡು ಸಿಪ್ಪೆಯವರೆಗೂ, ದ್ರಾಕ್ಷಿಬಳ್ಳಿಯಲ್ಲಿ ಬೆಳೆದದ್ದು ಯಾವುದನ್ನಾದರೂ ತಿನ್ನಬಾರದು.</verse>
				<verse number="5">“ ‘ಅವರ ನಾಜೀರ ವ್ರತದ ದಿನಗಳಲ್ಲೆಲ್ಲಾ ಕ್ಷೌರಮಾಡಿಸಿಕೊಳ್ಳಬಾರದು. ಅವರು ಯೆಹೋವ ದೇವರಿಗೆ ತಮ್ಮನ್ನು ಪ್ರತ್ಯೇಕಿಸಿಕೊಂಡ ದಿವಸಗಳು ಪೂರ್ತಿಯಾಗುವವರೆಗೆ ಅವರು ಪರಿಶುದ್ಧರಾಗಿರುವರು, ಅವರು ತಮ್ಮ ತಲೆಗೂದಲನ್ನು ಕತ್ತರಿಸದೇ ಬೆಳೆಯಬಿಡಬೇಕು.</verse>
				<verse number="6">“ ‘ಅವರು ಯೆಹೋವ ದೇವರಿಗೆ ತಮ್ಮನ್ನು ಪ್ರತ್ಯೇಕಿಸಿಕೊಂಡ ದಿವಸಗಳಲ್ಲೆಲ್ಲಾ ಸತ್ತವರ ಬಳಿಗೆ ಬರಬಾರದು.</verse>
				<verse number="7">ಅವರು ತಂದೆತಾಯಿ, ಸಹೋದರ ಸಹೋದರಿ ಸತ್ತರೂ ಅವರು ಅವರಿಗೋಸ್ಕರ ಅಪವಿತ್ರರಾಗಬಾರದು. ಏಕೆಂದರೆ ದೇವರಿಗೆ ಅವರ ಸಮರ್ಪಣೆಯ ಸಂಕೇತವು ಅವರ ತಲೆಯ ಮೇಲೆ ಇದೆ.</verse>
				<verse number="8">ಅವರ ಸಮರ್ಪಣೆಯ ದಿವಸಗಳಲ್ಲೆಲ್ಲಾ ಅವರು ಯೆಹೋವ ದೇವರಿಗೆ ಮೀಸಲಾಗಿರಬೇಕು.</verse>
				<verse number="9">“ ‘ಅವರ ಬಳಿಯಲ್ಲಿ ಯಾರಾದರೂ ಆಕಸ್ಮಿಕವಾಗಿ ಸತ್ತದ್ದರಿಂದ ಅವರ ತಲೆಯ ಕೂದಲು ಅಶುದ್ಧವಾದರೆ, ಅವರು ಶುದ್ಧರಾಗುವ ದಿವಸದಲ್ಲಿ ಅಂದರೆ ಏಳನೆಯ ದಿವಸದಲ್ಲಿ ತಮ್ಮ ತಲೆಯನ್ನು ಬೋಳಿಸಬೇಕು.</verse>
				<verse number="10">ಎಂಟನೆಯ ದಿವಸದಲ್ಲಿ ಅವರು ಯಾಜಕನ ಬಳಿಗೆ ಸಭೆಯ ಗುಡಾರದ ಬಾಗಿಲಿಗೆ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳದ ಮರಿಗಳನ್ನು ತರಬೇಕು.</verse>
				<verse number="11">ಯಾಜಕನು ಒಂದನ್ನು ದೋಷಪರಿಹಾರಕ ಬಲಿಯಾಗಿಯೂ, ಇನ್ನೊಂದನ್ನು ದಹನಬಲಿಯಾಗಿ ಅರ್ಪಿಸಿ, ಅವರು ಶವದ ಹತ್ತಿರವಿದ್ದು ಪಾಪಮಾಡಿದ್ದರಿಂದ, ಅವರಿಗೋಸ್ಕರ ಆ ದಿವಸದಲ್ಲಿ ಅವರ ತಲೆಯನ್ನು ಪ್ರತಿಷ್ಠಿಸಬೇಕು.</verse>
				<verse number="12">ಎಷ್ಟು ದಿನಗಳವರೆಗೆ ತಮ್ಮನ್ನು ಪ್ರತಿಷ್ಠಿಸಿಕೊಂಡಿದ್ದಾರೋ, ಅಷ್ಟು ದಿನಗಳವರೆಗೆ ಹೊಸದಾಗಿ ತಮ್ಮನ್ನು ಯೆಹೋವ ದೇವರಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತ ಬಲಿಯಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಅವರ ಸಮರ್ಪಣೆಯ ಅವಧಿಯಲ್ಲಿ ಅವರು ಅಶುದ್ಧವಾದುದರಿಂದ ಮೊದಲಿನ ದಿವಸಗಳು ವ್ಯರ್ಥವಾದುವೆಂದು ಪರಿಗಣಿಸಬೇಕು.</verse>
				<verse number="13">“ ‘ಇದು ನಾಜೀರ ವ್ರತವು. ಅವರ ಸಮರ್ಪಣೆಯ ದಿವಸಗಳು ಪೂರ್ಣವಾದ ಮೇಲೆ ಅವರನ್ನು ದೇವದರ್ಶನ ಗುಡಾರದ ಬಾಗಿಲಿನ ಬಳಿಗೆ ತರಬೇಕು.</verse>
				<verse number="14">ಅವರು ಯೆಹೋವ ದೇವರಿಗೆ ತಮ್ಮ ಅರ್ಪಣೆಗಳನ್ನು ಅರ್ಪಿಸಬೇಕು. ಅದೇನೆಂದರೆ, ದಹನಬಲಿಗಾಗಿ ಒಂದು ವರ್ಷದ ಕಳಂಕವಿಲ್ಲದ ಒಂದು ಟಗರಿನ ಮರಿಯನ್ನೂ, ಪಾಪ ಪರಿಹಾರದ ಬಲಿಗಾಗಿ ಒಂದು ವರ್ಷದ ಕಳಂಕವಿಲ್ಲದ ಒಂದು ಹೆಣ್ಣು ಕುರಿಮರಿಯನ್ನೂ, ಸಮಾಧಾನದ ಬಲಿಗಾಗಿ ಒಂದು ಕಳಂಕವಿಲ್ಲದ ಟಗರನ್ನೂ ತರಬೇಕು.</verse>
				<verse number="15">ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿಯಿಲ್ಲದ ರೊಟ್ಟಿಗಳ ಒಂದು ಬುಟ್ಟಿಯನ್ನೂ, ಎಣ್ಣೆ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ, ಧಾನ್ಯದ್ರವ್ಯ ಪಾನದ್ರವ್ಯ ಇವುಗಳನ್ನೆಲ್ಲಾ ಅರ್ಪಣೆಯಾಗಿ ತರಬೇಕು.</verse>
				<verse number="16">“ ‘ಇವುಗಳನ್ನು ಯಾಜಕನು ಯೆಹೋವ ದೇವರ ಎದುರಿನಲ್ಲಿ ತಂದು, ಅವರ ದೋಷಪರಿಹಾರಕ ಬಲಿಯನ್ನೂ ಅವರ ದಹನಬಲಿಯನ್ನೂ ಅರ್ಪಿಸಬೇಕು.</verse>
				<verse number="17">ಆ ಟಗರನ್ನು ಹುಳಿಯಿಲ್ಲದ ರೊಟ್ಟಿಯ ಬುಟ್ಟಿಯ ಸಂಗಡ ಯೆಹೋವ ದೇವರಿಗೆ ಸಮಾಧಾನದ ಬಲಿಯಾಗಿ ಅರ್ಪಿಸಬೇಕು. ಇದಲ್ಲದೆ ಯಾಜಕನು ಅವರ ಧಾನ್ಯವನ್ನೂ, ಪಾನದ್ರವ್ಯವನ್ನೂ ಅರ್ಪಿಸಬೇಕು.</verse>
				<verse number="18">“ ‘ಇದಲ್ಲದೆ ನಾಜೀರರು ತಮ್ಮ ಸಮರ್ಪಣೆಯನ್ನು ಸಂಕೇತಿಸುವ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಪ್ರತ್ಯೇಕಿಸಿದ ತಮ್ಮ ತಲೆಗೂದಲನ್ನು ತೆಗೆದುಕೊಂಡು, ಸಮಾಧಾನದ ಬಲಿಗಳ ಬಲಿಯ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.</verse>
				<verse number="19">“ ‘ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ, ಆ ಪುಟ್ಟಿಯೊಳಗಿಂದ ಹುಳಿಯಿಲ್ಲದ ಒಂದು ರೊಟ್ಟಿಯನ್ನೂ, ಹುಳಿಯಿಲ್ಲದ ಒಂದು ದೋಸೆಯನ್ನೂ, ಆ ನಾಜೀರರ ಪ್ರತ್ಯೇಕಿಸಿದ ಕೂದಲನ್ನು ಕ್ಷೌರಮಾಡಿಸಿದ ತರುವಾಯ ಅವರ ಕೈಗಳಲ್ಲಿ ಕೊಡಬೇಕು.</verse>
				<verse number="20">ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸುವ ಅರ್ಪಣೆಗಾಗಿ ಯೆಹೋವ ದೇವರ ಎದುರಿನಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಸಂಗಡ ಅದು ಯಾಜಕನಿಗೆ ಪರಿಶುದ್ಧವಾಗಿದೆ. ಆಮೇಲೆ ನಾಜೀರರು ದ್ರಾಕ್ಷಾರಸವನ್ನು ಕುಡಿಯಬಹುದು.</verse>
				<verse number="21">“ ‘ಪ್ರಮಾಣ ಮಾಡಿಕೊಂಡ ನಾಜೀರರ ನಿಯಮವು ಇದೇ. ಸಂಬಂಧಪಟ್ಟದ್ದರೊಂದಿಗೆ ತಮ್ಮ ಕೈಲಾದ ಮಟ್ಟಿಗೆ ಅವರು ತಮ್ಮ ಪ್ರತ್ಯೇಕಿಸುವಿಕೆಗಾಗಿ ಯೆಹೋವ ದೇವರಿಗೆ ಕಾಣಿಕೆ ಅರ್ಪಿಸತಕ್ಕದ್ದು. ನಾಜೀರ ವ್ರತದ ಕ್ರಮದ ಪ್ರಕಾರ, ನೀವು ಮಾಡಿದ ಪ್ರಮಾಣಕ್ಕನುಸಾರವಾಗಿ ತಮ್ಮ ವ್ರತದ ಕ್ರಮಗಳನ್ನು ನೆರವೇರಿಸಬೇಕು.’ ”</verse>
				<verse number="22">ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,</verse>
				<verse number="23">“ನೀನು ಆರೋನನಿಗೆ ಮತ್ತು ಅವನ ಪುತ್ರರಿಗೆ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಅವರಿಗೆ ಹೇಳಬೇಕು:</verse>
				<verse number="24">“ ‘ “ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಲಿ, ನಿಮ್ಮನ್ನು ಕಾಪಾಡಲಿ.</verse>
				<verse number="25">ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಪ್ರಕಾಶಿಸುವಂತೆ ಮಾಡಿ, ನಿಮಗೆ ಕೃಪೆ ತೋರಿಸಲಿ.</verse>
				<verse number="26">ಯೆಹೋವ ದೇವರು ತಮ್ಮ ಮುಖವನ್ನು ನಿಮ್ಮ ಕಡೆಗೆ ಎತ್ತಿ, ನಿಮಗೆ ಸಮಾಧಾನ ಅನುಗ್ರಹಿಸಲಿ.” ’</verse>
				<verse number="27">“ಹೀಗೆ ಅವರು ನನ್ನ ಹೆಸರನ್ನು ಇಸ್ರಾಯೇಲರ ಮೇಲೆ ಉಚ್ಛರಿಸುವರು. ನಾನೇ ಅವರನ್ನು ಆಶೀರ್ವದಿಸುವೆನು.”</verse>
			</chapter>
			<chapter number="7">
				<verse number="1">ಮೋಶೆಯು ದೇವದರ್ಶನ ಗುಡಾರವನ್ನು ನಿಲ್ಲಿಸಿ, ಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ಅದರ ಎಲ್ಲಾ ಸಲಕರಣೆಗಳನ್ನೂ, ಬಲಿಪೀಠವನ್ನೂ, ಅದರ ಎಲ್ಲಾ ಸಾಮಗ್ರಿಗಳನ್ನೂ ಅಭಿಷೇಕಿಸಿ ಪರಿಶುದ್ಧ ಮಾಡಿದನು. ಅನಂತರ,</verse>
				<verse number="2">ಇಸ್ರಾಯೇಲರ ಪ್ರಧಾನರು ಎಂದರೆ ಗೋತ್ರದ ಪ್ರಮುಖರು, ಕುಲಾಧಿಪತಿಗಳು ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು ಕಾಣಿಕೆಗಳನ್ನು ತಂದು ಸಮರ್ಪಿಸಿದರು.</verse>
				<verse number="3">ಅವರು ಯೆಹೋವ ದೇವರ ಎದುರಿನಲ್ಲಿ ತಂದ ಅರ್ಪಣೆ ಏನೆಂದರೆ ಆರು ಕಮಾನುಬಂಡಿಗಳು, ಹನ್ನೆರಡು ಎತ್ತುಗಳು, ಪ್ರಧಾನರಲ್ಲಿ ಇಬ್ಬರಿಗೆ ಒಂದು ಬಂಡಿಯಂತೆ, ಒಬ್ಬೊಬ್ಬನಿಗೆ ಒಂದೊಂದು ಎತ್ತುಗಳನ್ನು ಅವರು ದೇವದರ್ಶನ ಗುಡಾರದ ಮುಂದೆ ತಂದರು.</verse>
				<verse number="4">ಯೆಹೋವ ದೇವರು ಮಾತನಾಡಿ ಮೋಶೆಗೆ ಹೇಳಿದ್ದೇನೆಂದರೆ,</verse>
				<verse number="5">“ಅವುಗಳನ್ನು ಅವರಿಂದ ತೆಗೆದುಕೋ, ಅವು ದೇವದರ್ಶನ ಗುಡಾರದ ಸೇವೆಮಾಡುವುದಕ್ಕೋಸ್ಕರ ಇರಬೇಕು. ಅವುಗಳನ್ನು ಲೇವಿಯರಿಗೆ ಅವನವನ ಕೆಲಸಕ್ಕೆ ತಕ್ಕಂತೆ ಕೊಡಬೇಕು,” ಎಂದರು.</verse>
				<verse number="6">ಆಗ ಮೋಶೆಯು ಆ ಬಂಡಿಗಳನ್ನೂ, ಎತ್ತುಗಳನ್ನೂ ತೆಗೆದುಕೊಂಡು ಅವುಗಳನ್ನು ಲೇವಿಯರಿಗೆ ಕೊಟ್ಟನು.</verse>
				<verse number="7">ಎರಡು ಬಂಡಿಗಳನ್ನೂ, ನಾಲ್ಕು ಎತ್ತುಗಳನ್ನೂ, ಗೇರ್ಷೋನನ ಪುತ್ರರಿಗೆ ಅವರ ಕೆಲಸಕ್ಕೆ ತಕ್ಕ ಪ್ರಕಾರ ಕೊಟ್ಟನು.</verse>
				<verse number="8">ಯಾಜಕನಾದ ಆರೋನನ ಮಗ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ, ಎಂಟು ಎತ್ತುಗಳನ್ನೂ ಮೆರಾರೀಯ ಪುತ್ರರಿಗೆ ಅವರ ಕೆಲಸಕ್ಕೆ ತಕ್ಕಂತೆ ಕೊಟ್ಟನು.</verse>
				<verse number="9">ಆದರೆ ಕೊಹಾತ್ಯರಿಗೆ ಯಾವುದನ್ನೂ ಕೊಡಲಿಲ್ಲ. ಏಕೆಂದರೆ ಅವರು ತಮ್ಮ ಹೆಗಲುಗಳ ಮೇಲೆ ಪರಿಶುದ್ಧಸ್ಥಳದ ವಸ್ತುಗಳನ್ನು ಹೊತ್ತುಕೊಂಡು ಹೋಗುವುದೇ ಅವರಿಗೆ ಸೇವೆಯಾಗಿತ್ತು.</verse>
				<verse number="10">ಬಲಿಪೀಠವನ್ನು ಅಭಿಷೇಕಿಸಿದ ದಿನದಂದು ಪ್ರತಿಷ್ಠೆಗಾಗಿ ಅದರ ಮುಂದೆ ಬಂದು, ಪ್ರಧಾನರು ತಮ್ಮ ಕಾಣಿಕೆಗಳನ್ನು ಅರ್ಪಿಸಿದರು.</verse>
				<verse number="11">ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ಒಬ್ಬೊಬ್ಬ ಪ್ರಧಾನನು ತನ್ನ ತನ್ನ ದಿವಸದಲ್ಲಿ ಬಲಿಪೀಠದ ಪ್ರತಿಷ್ಠೆಗಾಗಿ ತಮ್ಮ ಕಾಣಿಕೆಯನ್ನು ಅರ್ಪಿಸಬೇಕು.”</verse>
				<verse number="12">ಮೊದಲನೆಯ ದಿವಸದಲ್ಲಿ ತನ್ನ ಕಾಣಿಕೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅಮ್ಮೀನಾದಾಬನ ಮಗ ನಹಶೋನನು.</verse>
				<verse number="13">ಅವನ ಅರ್ಪಣೆ ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಚೊಕ್ಕ ಬೆಳ್ಳಿಯ ಒಂದು ತಟ್ಟೆ ಮತ್ತು 70 ಶೆಕೆಲ್ ತೂಕದ ಬೆಳ್ಳಿಯ ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಇವೆರಡು ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.</verse>
				<verse number="14">ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,</verse>
				<verse number="15">ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಒಂದು ಕುರಿಮರಿ,</verse>
				<verse number="16">ದೋಷಪರಿಹಾರಕ ಬಲಿಗಾಗಿ ಒಂದು ಹೋತ,</verse>
				<verse number="17">ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರುಷದ ಐದು ಕುರಿಮರಿಗಳೂ ಸಮಾಧಾನದ ಬಲಿಗಾಗಿ ಸಮರ್ಪಿಸಬೇಕು. ಇದು ಅಮ್ಮೀನಾದಾಬನ ಮಗ ನಹಶೋನನ ಅರ್ಪಣೆಯು.</verse>
				<verse number="18">ಎರಡನೆಯ ದಿವಸದಲ್ಲಿ ಇಸ್ಸಾಕಾರನ ಗೋತ್ರದ ಪ್ರಧಾನನಾಗಿರುವ ಚೂವಾರನ ಮಗ ನೆತನೆಯೇಲ್ ಅರ್ಪಿಸಿದನು.</verse>
				<verse number="19">ಅವನ ಅರ್ಪಣೆ ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಒಂದು ಬೆಳಿಯ್ಳ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.</verse>
				<verse number="20">ಧೂಪದಿಂದ ತುಂಬಿದ್ದ ಹತ್ತು ಶೆಕೆಲ್ ತೂಕದ ಬಂಗಾರದ ಒಂದು ಚಮಚ,</verse>
				<verse number="21">ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,</verse>
				<verse number="22">ಪಾಪ ಪರಿಹಾರದ ಬಲಿಗಾಗಿ ಒಂದು ಹೋತ,</verse>
				<verse number="23">ಸಮಾಧಾನದ ಬಲಿಗಳ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು. ಇದು ಚೂವಾರನ ಮಗ ನೆತನೆಯೇಲ್ ಇವನ ಅರ್ಪಣೆಯು.</verse>
				<verse number="24">ಮೂರನೆಯ ದಿವಸದಲ್ಲಿ ಜೆಬುಲೂನ್ ಮಕ್ಕಳಿಗೆ ಪ್ರಧಾನನಾಗಿರುವ ಹೇಲೋನನ ಮಗ ಎಲೀಯಾಬನು ಅರ್ಪಿಸಿದ್ದು.</verse>
				<verse number="25">ಅವನ ಅರ್ಪಣೆ ಏನೆಂದರೆ: ದೇವರ ಸೇವೆಗೆ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.</verse>
				<verse number="26">ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,</verse>
				<verse number="27">ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,</verse>
				<verse number="28">ದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ,</verse>
				<verse number="29">ಮತ್ತು ಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು. ಇದು ಹೇಲೋನನ ಮಗ ಎಲೀಯಾಬನ ಸಮರ್ಪಣೆಯು.</verse>
				<verse number="30">ನಾಲ್ಕನೆಯ ದಿನದಲ್ಲಿ ರೂಬೇನನ ಮಕ್ಕಳಿಗೆ ಪ್ರಧಾನನಾಗಿರುವ ಶೆದೇಯೂರನ ಮಗ ಎಲೀಚೂರನು ಅರ್ಪಿಸಿದನು.</verse>
				<verse number="31">ಅವನ ಅರ್ಪಣೆಯು ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.</verse>
				<verse number="32">ಧೂಪದಿಂದ ತುಂಬಿದ್ದ ಹತ್ತು ಶೆಕೆಲ್ ತೂಕದ ಬಂಗಾರದ ಒಂದು ಚಮಚ,</verse>
				<verse number="33">ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,</verse>
				<verse number="34">ಪಾಪ ಪರಿಹಾರದ ಬಲಿಗಾಗಿ ಒಂದು ಹೋತವನ್ನೂ,</verse>
				<verse number="35">ಸಮಾಧಾನದ ಬಲಿಗಾಗಿ ಎರಡು ಹೋರಿಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು. ಇದು ಶೆದೇಯೂರನ ಮಗ ಎಲೀಚೂರನ ಅರ್ಪಣೆಯು.</verse>
				<verse number="36">ಐದನೆಯ ದಿನದಲ್ಲಿ ಸಿಮೆಯೋನನ ಗೋತ್ರದ ಪ್ರಧಾನನಾಗಿರುವ ಚುರೀಷದ್ದೈಯನ ಮಗ ಶೆಲುಮೀಯೇಲನು ಅರ್ಪಿಸಿದನು.</verse>
				<verse number="37">ಅವನ ಅರ್ಪಣೆಯು ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಒಂದು ಬೆಳಿಯ್ಳ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.</verse>
				<verse number="38">ಧೂಪದಿಂದ ತುಂಬಿದ್ದ ಹತ್ತು ಶೆಕೆಲ್ ತೂಕದ ಬಂಗಾರದ ಒಂದು ಚಮಚ,</verse>
				<verse number="39">ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,</verse>
				<verse number="40">ಪಾಪ ಪರಿಹಾರದ ಬಲಿಗಾಗಿ ಒಂದು ಹೋತವನ್ನೂ,</verse>
				<verse number="41">ಸಮಾಧಾನದ ಬಲಿಗಾಗಿ ಎರಡು ಹೋರಿಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು. ಇದು ಚುರೀಷದ್ದೈಯನ ಮಗ ಶೆಲುಮೀಯೇಲನ ಅರ್ಪಣೆಯು.</verse>
				<verse number="42">ಆರನೆಯ ದಿನದಲ್ಲಿ ಗಾದನ ಗೋತ್ರದ ಪ್ರಧಾನನಾಗಿರುವ ದೆವುಯೇಲನ ಮಗ ಎಲ್ಯಾಸಾಫನು ಅರ್ಪಿಸಿದನು.</verse>
				<verse number="43">ಅವನ ಅರ್ಪಣೆಯು ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.</verse>
				<verse number="44">ಧೂಪದಿಂದ ತುಂಬಿದ್ದ ಹತ್ತು ಶೆಕೆಲ್ ತೂಕದ ಬಂಗಾರದ ಒಂದು ಚಮಚ,</verse>
				<verse number="45">ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,</verse>
				<verse number="46">ದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ,</verse>
				<verse number="47">ಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರುಷದ ಐದು ಕುರಿಮರಿಗಳು. ಇದು ದೆವುಯೇಲನ ಮಗ ಎಲ್ಯಾಸಾಫನ ಅರ್ಪಣೆಯು.</verse>
				<verse number="48">ಏಳನೆಯ ದಿನದಲ್ಲಿ ಎಫ್ರಾಯೀಮ್ ಗೋತ್ರದ ಪ್ರಧಾನನಾದ ಅಮ್ಮೀಹೂದನ ಮಗ ಎಲೀಷಾಮನು ಅರ್ಪಿಸಿದನು.</verse>
				<verse number="49">ಅವನ ಅರ್ಪಣೆ ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧಸ್ಥಳದ ಪ್ರಕಾರ 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.</verse>
				<verse number="50">ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,</verse>
				<verse number="51">ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಒಂದು ಕುರಿಮರಿ,</verse>
				<verse number="52">ದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ,</verse>
				<verse number="53">ಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು. ಇದು ಅಮ್ಮೀಹೂದನ ಮಗ ಎಲೀಷಾಮನ ಅರ್ಪಣೆಯು.</verse>
				<verse number="54">ಎಂಟನೆಯ ದಿನದಲ್ಲಿ ಮನಸ್ಸೆ ಗೋತ್ರದ ಪ್ರಧಾನನಾದ ಪೆದಾಚೂರನ ಮಗ ಗಮಲಿಯೇಲನು ಅರ್ಪಿಸಿದನು.</verse>
				<verse number="55">ಅವನ ಅರ್ಪಣೆಯು ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.</verse>
				<verse number="56">ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,</verse>
				<verse number="57">ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಒಂದು ಕುರಿಮರಿ,</verse>
				<verse number="58">ದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ,</verse>
				<verse number="59">ಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರುಷದ ಐದು ಕುರಿಮರಿಗಳು. ಇದು ಪೆದಾಚೂರನ ಮಗ ಗಮಲಿಯೇಲನ ಅರ್ಪಣೆಯು.</verse>
				<verse number="60">ಒಂಬತ್ತನೆಯ ದಿನದಲ್ಲಿ ಬೆನ್ಯಾಮೀನನ ಗೋತ್ರದ ಪ್ರಧಾನನಾದ ಗಿದ್ಯೋನಿಯ ಮಗ ಅಬೀದಾನನು ಅರ್ಪಿಸಿದನು.</verse>
				<verse number="61">ಅವನ ಅರ್ಪಣೆಯು ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.</verse>
				<verse number="62">ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,</verse>
				<verse number="63">ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಒಂದು ಕುರಿಮರಿ,</verse>
				<verse number="64">ದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ,</verse>
				<verse number="65">ಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರುಷದ ಐದು ಕುರಿಮರಿಗಳು. ಇದು ಗಿದ್ಯೋನಿಯ ಮಗ ಅಬೀದಾನನ ಅರ್ಪಣೆಯು.</verse>
				<verse number="66">ಹತ್ತನೆಯ ದಿನದಲ್ಲಿ ದಾನನ ಗೋತ್ರದ ಪ್ರಧಾನವಾದ ಅಮ್ಮೀಷದ್ದೈಯನ ಮಗ ಅಹೀಗೆಜೆರನು ಅರ್ಪಿಸಿದನು.</verse>
				<verse number="67">ಅವನ ಅರ್ಪಣೆಯು ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.</verse>
				<verse number="68">ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,</verse>
				<verse number="69">ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,</verse>
				<verse number="70">ದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ,</verse>
				<verse number="71">ಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರುಷದ ಐದು ಕುರಿಮರಿಗಳು. ಇದು ಅಮ್ಮೀಷದ್ದೈಯನ ಮಗ ಅಹೀಗೆಜೆರನ ಅರ್ಪಣೆಯು.</verse>
				<verse number="72">ಹನ್ನೊಂದನೆಯ ದಿನದಲ್ಲಿ ಆಶೇರನ ಗೋತ್ರದ ಪ್ರಧಾನನಾದ ಒಕ್ರಾನನ ಮಗ ಪಗೀಯೇಲನು ಅರ್ಪಿಸಿದನು.</verse>
				<verse number="73">ಅವನ ಅರ್ಪಣೆಯು ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧಸ್ಥಳದ ಪ್ರಕಾರ 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.</verse>
				<verse number="74">ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,</verse>
				<verse number="75">ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,</verse>
				<verse number="76">ದೋಷಪರಿಹಾರಕ ಬಲಿಗಾಗಿ ಒಂದು ಹೋತ,</verse>
				<verse number="77">ಸಮಾಧಾನದ ಬಲಿಗಾಗಿ ಒಂದು ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು. ಇದು ಒಕ್ರಾನನ ಮಗ ಪಗೀಯೇಲನ ಅರ್ಪಣೆಯು.</verse>
				<verse number="78">ಹನ್ನೆರಡನೆಯ ದಿನದಲ್ಲಿ ನಫ್ತಾಲಿಯ ಗೋತ್ರದ ಪ್ರಧಾನನಾದ ಏನಾನನ ಮಗ ಅಹೀರನು ಅರ್ಪಿಸಿದನು.</verse>
				<verse number="79">ಅವನ ಅರ್ಪಣೆಯು ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು,</verse>
				<verse number="80">ಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,</verse>
				<verse number="81">ದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,</verse>
				<verse number="82">ದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ,</verse>
				<verse number="83">ಸಮಾಧಾನದ ಸಮರ್ಪಣೆಯ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು. ಇದು ಏನಾನನ ಮಗ ಅಹೀರನ ಅರ್ಪಣೆಯು.</verse>
				<verse number="84">ಇದು ಬಲಿಪೀಠದ ಪ್ರತಿಷ್ಠೆಗಾಗಿ ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು: ಬೆಳ್ಳಿಯ 12 ತಟ್ಟೆಗಳೂ, ಬೆಳ್ಳಿಯ 12 ಬಟ್ಟಲುಗಳೂ, ಬಂಗಾರದ 12 ಚಮಚಗಳೂ,</verse>
				<verse number="85">ಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು 130 ಶೆಕೆಲ್, ಒಂದೊಂದು ಬಟ್ಟಲಿನ ತೂಕವು 70 ಶೆಕೆಲ್. ಬೆಳ್ಳಿಯ ಎಲ್ಲಾ ಸಾಮಗ್ರಿಗಳ ತೂಕ ಪರಿಶುದ್ಧಸ್ಥಳದ ನೇಮದ ಪ್ರಕಾರ 2,400 ಶೆಕೆಲ್.</verse>
				<verse number="86">ಧೂಪ ತುಂಬಿದ್ದ 12 ಬಂಗಾರದ ಚಮಚಗಳು, ಪರಿಶುದ್ಧಸ್ಥಳದ ಪ್ರಕಾರ ಒಂದೊಂದಕ್ಕೆ 10 ಚಮಚಗಳ ಬಂಗಾರವೆಲ್ಲಾ 120 ಶೆಕೆಲ್,</verse>
				<verse number="87">ದಹನಬಲಿಗಾಗಿ ಇರುವ ಒಟ್ಟು ಪಶುಗಳು: 12 ಹೋರಿಗಳು, 12 ಟಗರುಗಳು, ಒಂದು ವರ್ಷದ ಕುರಿಮರಿಗಳು 12, ಅವುಗಳೊಂದಿಗೆ ಧಾನ್ಯ ಸಮರ್ಪಣೆ. ದೋಷಪರಿಹಾರಕ ಬಲಿಗಾಗಿ 12 ಹೋತಗಳು,</verse>
				<verse number="88">ಸಮಾಧಾನದ ಬಲಿಗಾಗಿರುವ ಒಟ್ಟು ಪಶುಗಳು: 24 ಹೋರಿಗಳು, 60 ಟಗರುಗಳು, 60 ಹೋತಗಳು, ಒಂದು ವರ್ಷದ ಗಂಡು ಕುರಿಮರಿಗಳು 60. ಅದನ್ನು ಅಭಿಷೇಕಿಸಿದ ತರುವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆ ಇದಾಗಿತ್ತು.</verse>
				<verse number="89">ಮೋಶೆಯು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಾಗ, ಅವನು ಒಡಂಬಡಿಕೆಯ ಮಂಜೂಷದ ಮೇಲೆ ಇರುವ ಕರುಣಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವ ಧ್ವನಿಯನ್ನು ಮೋಶೆಯು ಕೇಳಿದನು. ಹೀಗೆ ದೇವರು ಅವನ ಸಂಗಡ ಮಾತನಾಡಿದರು.</verse>
			</chapter>
			<chapter number="8">
				<verse number="1">ಯೆಹೋವ ದೇವರು ಮೋಶೆಗೆ:</verse>
				<verse number="2">“ಆರೋನನ ಸಂಗಡ ಮಾತನಾಡಿ ಅವನಿಗೆ ಹೀಗೆ ಹೇಳಬೇಕು, ‘ನೀನು ದೀಪಗಳನ್ನು ಹಚ್ಚುವಾಗ ಆ ಏಳು ದೀಪಗಳೂ ದೀಪಸ್ತಂಭದ ಎದುರಿಗಿರುವ ಸ್ಥಳಕ್ಕೆ ಪ್ರಕಾಶಕೊಡುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.”</verse>
				<verse number="3">ಆರೋನನು ಹಾಗೆಯೇ ಮಾಡಿ, ದೀಪಸ್ತಂಭದ ಎದುರಿನ ಪ್ರದೇಶಕ್ಕೆ ಬೆಳಕುಕೊಡುವಂತೆ ಅದರ ದೀಪಗಳನ್ನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಹಚ್ಚಿದನು.</verse>
				<verse number="4">ದೀಪಸ್ತಂಭವೂ ಅದರ ಬುಡಭಾಗವೂ, ಪುಷ್ಪಾಲಂಕಾರಗಳೂ ಬಂಗಾರದ ನಕಾಸಿ ಕೆಲಸದಿಂದ ಹೊಡೆದು ಮಾಡಲಾಗಿತ್ತು. ಯೆಹೋವ ದೇವರು ಮೋಶೆಗೆ ತೋರಿಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿದನು.</verse>
				<verse number="5">ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="6">“ಲೇವಿಯರನ್ನು ಇಸ್ರಾಯೇಲರೊಳಗಿಂದ ತೆಗೆದುಕೊಂಡು ಅವರನ್ನು ಪ್ರತ್ಯೇಕಿಸಿ ಶುದ್ಧಮಾಡು.</verse>
				<verse number="7">ಅವರನ್ನು ಶುದ್ಧಮಾಡುವುದಕ್ಕೆ ಅವರಿಗೆ ಮಾಡಬೇಕಾದದ್ದೇನೆಂದರೆ ಶುದ್ಧೀಮಾಡುವ ನೀರನ್ನು ಅವರ ಮೇಲೆ ಚಿಮುಕಿಸು. ಅವರು ಸರ್ವಾಂಗ ಕ್ಷೌರ ಮಾಡಿಸಿಕೊಳ್ಳಲಿ. ಅವರು ತಮ್ಮ ವಸ್ತ್ರಗಳನ್ನು ಒಗೆದುಕೊಳ್ಳಲಿ. ಹೀಗೆ ಅವರು ತಮ್ಮನ್ನು ತಾವೇ ಶುದ್ಧ ಮಾಡಿಕೊಳ್ಳಬೇಕು.</verse>
				<verse number="8">ಅವರು ದಹನಬಲಿಗಾಗಿ ಒಂದು ಎಳೆಯ ಹೋರಿಯನ್ನು, ಅದರೊಂದಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ದೋಷಪರಿಹಾರಕ ಬಲಿಗಾಗಿ ಮತ್ತೊಂದು ಹೋರಿಯನ್ನೂ ನೀನು ತೆಗೆದುಕೋ.</verse>
				<verse number="9">ಆಗ ನೀನು ಲೇವಿಯರನ್ನು ದೇವದರ್ಶನದ ಗುಡಾರದ ಮುಂದೆ ಕರೆತಂದು, ಇಸ್ರಾಯೇಲರ ಸಮೂಹವನ್ನೆಲ್ಲಾ ಒಟ್ಟುಗೂಡಿಸಬೇಕು.</verse>
				<verse number="10">ನೀನು ಲೇವಿಯರನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಕರೆತಂದಾಗ, ಇಸ್ರಾಯೇಲರು ತಮ್ಮ ಕೈಗಳನ್ನು ಲೇವಿಯರ ಮೇಲೆ ಇಡಬೇಕು.</verse>
				<verse number="11">ಲೇವಿಯರು ಇಸ್ರಾಯೇಲರ ಪರವಾಗಿ ಯೆಹೋವ ದೇವರ ಸೇವೆಯನ್ನು ಮಾಡುವುದಕ್ಕೆ ಸಿದ್ಧರಾಗುವಂತೆ ಆರೋನನು ಅವರನ್ನು ಯೆಹೋವ ದೇವರ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಬೇಕು.</verse>
				<verse number="12">“ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯೆಹೋವ ದೇವರಿಗೆ ಒಂದು ಹೋರಿಯನ್ನು ದೋಷಪರಿಹಾರಕ ಬಲಿಗಾಗಿಯೂ ಮತ್ತೊಂದು ಹೋರಿಯನ್ನು ದಹನಬಲಿಗಾಗಿಯೂ ಸಮರ್ಪಿಸಬೇಕು.</verse>
				<verse number="13">ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಪುತ್ರರ ಮುಂದೆಯೂ ನಿಲ್ಲಿಸಿ, ಅವರನ್ನು ಯೆಹೋವ ದೇವರಿಗೆ ನೈವೇದ್ಯದಂತೆ ಸಮರ್ಪಿಸಬೇಕು.</verse>
				<verse number="14">ಹೀಗೆ ನೀನು ಲೇವಿಯರನ್ನು ಇಸ್ರಾಯೇಲರೊಳಗಿಂದ ಪ್ರತ್ಯೇಕಿಸಬೇಕು, ಆಗ ಲೇವಿಯರು ನನ್ನವರಾಗುವರು.</verse>
				<verse number="15">“ಅದರ ತರುವಾಯ ಲೇವಿಯರು ಸೇವೆ ಮಾಡವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸುವರು. ಆಗ ನೀನು ಅವರನ್ನು ಶುದ್ಧೀಮಾಡಿ, ನೈವೇದ್ಯದಂತೆ ಸಮರ್ಪಿಸಬೇಕು.</verse>
				<verse number="16">ಏಕೆಂದರೆ ಅವರು ಇಸ್ರಾಯೇಲರಲ್ಲಿ ನನಗೆ ಸಂಪೂರ್ಣವಾಗಿ ಸಮರ್ಪಿತರಾದವರು. ಚೊಚ್ಚಲು ಮಕ್ಕಳಿಗೆ ಬದಲಾಗಿ, ಅಂದರೆ ಇಸ್ರಾಯೇಲರ ಜೇಷ್ಠಪುತ್ರರಿಗೆ ಬದಲಾಗಿ ನಾನು ಅವರನ್ನೇ ನನಗೋಸ್ಕರ ತೆಗೆದುಕೊಂಡಿದ್ದೇನೆ.</verse>
				<verse number="17">ಏಕೆಂದರೆ ಇಸ್ರಾಯೇಲರಲ್ಲಿ ಮನುಷ್ಯರಾದರೂ ಪಶುಗಳಾದರೂ ಜೇಷ್ಠರಾದದ್ದೆಲ್ಲಾ ನನ್ನದೇ. ನಾನು ಈಜಿಪ್ಟ್ ದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹರಿಸಿದಾಗ ಇಸ್ರಾಯೇಲರಲ್ಲಿ ಚೊಚ್ಚಲಾದದ್ದನ್ನು ನನ್ನ ಸ್ವಂತಕ್ಕಾಗಿ ಪ್ರತ್ಯೇಕಿಸಿಕೊಂಡೆನು.</verse>
				<verse number="18">ಇಸ್ರಾಯೇಲರಲ್ಲಿರುವ ಎಲ್ಲಾ ಜೇಷ್ಠಪುತ್ರರಿಗೆ ಬದಲಾಗಿ ಲೇವಿಯರನ್ನು ನಾನು ತೆಗೆದುಕೊಂಡೆನು.</verse>
				<verse number="19">ಅವರು ದೇವದರ್ಶನದ ಗುಡಾರದಲ್ಲಿ ಇಸ್ರಾಯೇಲರ ಸೇವೆಯನ್ನು ಮಾಡುವುದಕ್ಕೂ ಇಸ್ರಾಯೇಲರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲರು ಸಮೀಪಿಸುವಾಗ ಇಸ್ರಾಯೇಲರೊಳಗೆ ವ್ಯಾಧಿಯು ಇರದಂತೆ ನಾನು ಲೇವಿಯರನ್ನು ಇಸ್ರಾಯೇಲರೊಳಗಿಂದ ಆರೋನನಿಗೂ, ಅವನ ಪುತ್ರರಿಗೂ ದಾನವಾಗಿ ಕೊಟ್ಟಿದ್ದೇನೆ.”</verse>
				<verse number="20">ಆಗ ಯೆಹೋವ ದೇವರು ಮೋಶೆಗೆ ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆಯೂ ಆರೋನನೂ ಮತ್ತು ಇಸ್ರಾಯೇಲರ ಸಮೂಹದವರೆಲ್ಲರೂ ಮಾಡಿದರು.</verse>
				<verse number="21">ಲೇವಿಯರು ತಮ್ಮನ್ನು ಶುದ್ಧಿಮಾಡಿಕೊಂಡು, ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಯೆಹೋವ ದೇವರ ಮುಂದೆ ನೈವೇದ್ಯದಂತೆ ಅರ್ಪಿಸಿದನು. ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.</verse>
				<verse number="22">ತರುವಾಯ ಲೇವಿಯರು ದೇವದರ್ಶನದ ಗುಡಾರದಲ್ಲಿ ಆರೋನನ ಮುಂದೆಯೂ, ಅವನ ಪುತ್ರರ ಮುಂದೆಯೂ ಅವರ ಸೇವೆ ಮಾಡುವುದಕ್ಕೆ ಒಳಗೆ ಪ್ರವೇಶಿಸಿದರು. ಯೆಹೋವ ದೇವರು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದರೋ, ಹಾಗೆಯೇ ಮಾಡಿದನು.</verse>
				<verse number="23">ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,</verse>
				<verse number="24">“ಲೇವಿಯರಿಗೆ ಸಂಬಂಧಪಟ್ಟದ್ದು ಇದಾಗಿದೆ: ಇಪ್ಪತ್ತೈದು ವರ್ಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ದೇವದರ್ಶನದ ಗುಡಾರದ ಸೇವೆಗಾಗಿ ಒಳಗೆ ಸೇರಬೇಕು.</verse>
				<verse number="25">ಆದರೆ ಐವತ್ತು ವರ್ಷದವರಾದ ನಂತರ ಸೇವೆಯನ್ನು ಬಿಟ್ಟು ನಿವೃತ್ತರಾಗಬೇಕು ಮತ್ತು ತದನಂತರ ಕೆಲಸಮಾಡಬಾರದು.</verse>
				<verse number="26">ಆದರೆ ಅವರು ದೇವದರ್ಶನದ ಗುಡಾರದಲ್ಲಿ ಅಪ್ಪಣೆಯನ್ನು ಕೈಗೊಂಡು ತಮ್ಮ ಸಹೋದರರೊಂದಿಗೆ ಕೆಲಸಮಾಡಲಿ, ಆದರೆ ಅವರು ಸೇವೆಯನ್ನು ತಾವಾಗಿ ಮಾಡಬಾರದು. ಈ ಪ್ರಕಾರ ನೀನು ಲೇವಿಯರಿಗೆ ಕರ್ತವ್ಯಗಳನ್ನು ಆಜ್ಞಾಪಿಸಬೇಕು,” ಎಂಬುದು.</verse>
			</chapter>
			<chapter number="9">
				<verse number="1">ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ಎರಡನೆಯ ವರ್ಷದ ಮೊದಲನೆಯ ತಿಂಗಳಿನಲ್ಲಿ ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ಮೋಶೆಯ ಸಂಗಡ ಮಾತನಾಡಿ ಹೀಗೆ ಹೇಳಿದರು:</verse>
				<verse number="2">“ಇಸ್ರಾಯೇಲರು ಪಸ್ಕವನ್ನು ನೇಮಿಸಿದ ಸಮಯದಲ್ಲಿ ಆಚರಿಸಬೇಕು.</verse>
				<verse number="3">ಈ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆಯಲ್ಲಿ ಅದನ್ನು ಆಚರಿಸಬೇಕು. ಅದರ ಆಜ್ಞಾವಿಧಿಗಳ ಪ್ರಕಾರವಾಗಿಯೂ, ಅದರ ಎಲ್ಲಾ ನಿಯಮಗಳ ಪ್ರಕಾರವಾಗಿಯೂ ಅದನ್ನು ಆಚರಿಸಿರಿ.”</verse>
				<verse number="4">ಆಗ ಮೋಶೆಯು ಪಸ್ಕವನ್ನು ಆಚರಿಸುವುದಕ್ಕೆ ಇಸ್ರಾಯೇಲರ ಸಂಗಡ ಮಾತನಾಡಿದನು.</verse>
				<verse number="5">ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆ ಸೀನಾಯಿ ಮರುಭೂಮಿಯಲ್ಲಿ ಪಸ್ಕವನ್ನು ಆಚರಿಸಿದರು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ, ಇಸ್ರಾಯೇಲರು ಮಾಡಿದರು.</verse>
				<verse number="6">ಆದರೆ ಕೆಲವು ಜನರು ಮನುಷ್ಯನ ಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿ ಆ ದಿವಸದಲ್ಲಿ ಪಸ್ಕಹಬ್ಬವನ್ನು ಆಚರಿಸಲಾಗಲಿಲ್ಲ ಅದಕ್ಕೆ ಅದೇ ದಿನ ಅವರು ಮೋಶೆ ಮತ್ತು ಆರೋನರ ಬಳಿಗೆ ಬಂದು</verse>
				<verse number="7">ಮೋಶೆಯ ಸಂಗಡ ಮಾತನಾಡಿ, “ನಾವು ಮನುಷ್ಯನ ಶವದ ಸೋಂಕಿನಿಂದ ಅಶುದ್ಧರಾಗಿದ್ದೇವೆ. ಆದ್ದರಿಂದ ನಾವು ಇಸ್ರಾಯೇಲರೊಡನೆ ನೇಮಕವಾದ ಸಮಯದಲ್ಲಿ ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸಲು ನಮಗೆ ಏಕೆ ಅಡ್ಡಿಯಾಗಬೇಕು,” ಎಂದರು.</verse>
				<verse number="8">ಮೋಶೆ ಅವರಿಗೆ, “ಸ್ವಲ್ಪ ಕಾಯಿರಿ, ಯೆಹೋವ ದೇವರು ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುತ್ತಾರೋ ನಾನು ಕೇಳುತ್ತೇನೆ,” ಎಂದನು.</verse>
				<verse number="9">ಯೆಹೋವ ದೇವರು ಮೋಶೆ ಸಂಗಡ ಮಾತನಾಡಿ ಅವನಿಗೆ,</verse>
				<verse number="10">ನೀನು ಇಸ್ರಾಯೇಲರಿಗೆ, “ನಿಮ್ಮಲ್ಲಿಯೂ, ನಿಮ್ಮ ಸಂತತಿಯಲ್ಲಿಯೂ ಯಾವನಾದರೂ ಶವದ ಸೋಂಕಿನಿಂದ ಅಶುದ್ಧನಾಗಿದ್ದರೂ, ಇಲ್ಲವೆ ದೂರ ಪ್ರಯಾಣದಲ್ಲಿದ್ದರೂ ಯೆಹೋವ ದೇವರಿಗೆ ಪಸ್ಕಹಬ್ಬವನ್ನು ಆಚರಿಸಬೇಕು.</verse>
				<verse number="11">ಆದರೆ ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆಯಲ್ಲಿ ಆಚರಿಸಲಿ. ಆ ಕುರಿಯನ್ನು ಹುಳಿಯಿಲ್ಲದ ರೊಟ್ಟಿಗಳ ಸಂಗಡ ಕಹಿಯಾದ ಸೊಪ್ಪುಗಳೊಂದಿಗೆ ಊಟಮಾಡಬೇಕು.</verse>
				<verse number="12">ಅವರು ಅದರಿಂದ ಮರುದಿವಸಕ್ಕೆ ಏನನ್ನೂ ಉಳಿಸಬಾರದು. ಅದರಲ್ಲಿ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು, ಪಸ್ಕದ ಸಮಸ್ತ ಕಟ್ಟಳೆಗಳ ಪ್ರಕಾರವಾಗಿ ಅದನ್ನು ಆಚರಿಸಬೇಕು.</verse>
				<verse number="13">ಆದರೆ ಒಬ್ಬ ಮನುಷ್ಯನೂ ಆಚಾರವಾಗಿ ಶುದ್ಧನಾದವನು, ಪ್ರಯಾಣ ಮಾಡದವನಾಗಿದ್ದು ಪಸ್ಕವನ್ನು ಆಚರಿಸಲು ತಪ್ಪಿದರೆ, ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು. ಅವನು ಯೆಹೋವ ದೇವರ ಅರ್ಪಣೆಯನ್ನು ಅದರ ಸಮಯದಲ್ಲಿ ತರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.</verse>
				<verse number="14">“ಪರದೇಶಿಯಾದವನು ನಿಮ್ಮ ಸಂಗಡ ಇದ್ದು, ಯೆಹೋವ ದೇವರಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಬಯಸಿದರೆ, ಅದರ ಆಜ್ಞಾವಿಧಿಗಳ ಪ್ರಕಾರವೇ ಆಚರಿಸಲಿ. ಸ್ಥಳೀಯ ಮೂಲದ ಇಸ್ರಾಯೇಲರಿಗೂ ಮತ್ತು ನಿಮ್ಮ ನಡುವೆ ವಾಸಿಸುವ ಪರದೇಶಸ್ತನಿಗೂ ಒಂದೇ ನಿಯಮ ಇರಬೇಕು,” ಎಂದು ಹೇಳಿದರು.</verse>
				<verse number="15">ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರವನ್ನು ಮುಚ್ಚಿತು. ಸಂಜೆಯಿಂದ ಮುಂಜಾನೆಯವರೆಗೆ ಅದು ಬೆಂಕಿಯಂತೆ ಗುಡಾರದ ಮೇಲೆ ಇತ್ತು.</verse>
				<verse number="16">ಈ ಪ್ರಕಾರ ಯಾವಾಗಲೂ, ಮೇಘವು ರಾತ್ರಿಯಲ್ಲಿ ಬೆಂಕಿಯಂತೆ ಅದನ್ನು ಮುಚ್ಚುತ್ತಿತ್ತು.</verse>
				<verse number="17">ಆ ಮೇಘವು ಗುಡಾರದ ಮೇಲಿನಿಂದ ಹೋದಾಗ, ಇಸ್ರಾಯೇಲರು ಪ್ರಯಾಣ ಮಾಡುತ್ತಿದ್ದರು, ಮೇಘವು ನೆಲಸಿದ ಸ್ಥಳದಲ್ಲಿ ಇಸ್ರಾಯೇಲರು ತಮ್ಮ ಗುಡಾರಗಳನ್ನು ಹಾಕಿಕೊಳ್ಳುತ್ತಿದ್ದರು.</verse>
				<verse number="18">ಯೆಹೋವ ದೇವರ ಆಜ್ಞೆಯ ಪ್ರಕಾರ ಇಸ್ರಾಯೇಲರು ಪ್ರಯಾಣಮಾಡಿದರು. ಯೆಹೋವ ದೇವರ ಆಜ್ಞೆಯ ಪ್ರಕಾರ ಗುಡಾರಗಳನ್ನು ಹಾಕಿದರು. ಮೇಘವು ಗುಡಾರದ ಮೇಲೆ ನೆಲಸಿರುವ ಕಾಲವೆಲ್ಲಾ ಅವರು ತಮ್ಮ ಗುಡಾರಗಳಲ್ಲಿ ವಾಸಿಸಿದರು.</verse>
				<verse number="19">ಮೇಘವು ದೇವದರ್ಶನದ ಗುಡಾರದ ಮೇಲೆ ಅನೇಕ ದಿವಸಗಳು ತಡಮಾಡಿದಾಗ, ಇಸ್ರಾಯೇಲರು ಯೆಹೋವ ದೇವರ ಅಪ್ಪಣೆಯನ್ನು ಅನುಸರಿಸಿ ಪ್ರಯಾಣ ಮಾಡದೆ ಇರುತ್ತಿದ್ದರು.</verse>
				<verse number="20">ಇದಲ್ಲದೆ ಮೇಘವು ಗುಡಾರದ ಮೇಲೆ ಸ್ವಲ್ಪ ದಿವಸಗಳು ಇರುವಾಗ, ಅವರು ಯೆಹೋವ ದೇವರ ಆಜ್ಞೆಯ ಪ್ರಕಾರ ಇಳಿದುಕೊಳ್ಳುತ್ತಿದ್ದರು. ಯೆಹೋವ ದೇವರ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಿದ್ದರು.</verse>
				<verse number="21">ಮೇಘವು ಸಂಜೆಯಿಂದ ಮುಂಜಾನೆಯವರೆಗೆ ಇದ್ದು, ಬೆಳಿಗ್ಗೆ ಮೇಲಕ್ಕೆ ಎದ್ದಾಗ, ಅವರು ಪ್ರಯಾಣ ಮಾಡುತ್ತಿದ್ದರು, ಹಗಲುರಾತ್ರಿ ಇದ್ದು ಮೇಘವು ಮೇಲಕ್ಕೇರಿದಾಗ ಅವರು ಪ್ರಯಾಣ ಮಾಡುತ್ತಿದ್ದರು.</verse>
				<verse number="22">ಆ ಮೇಘವು ಎರಡು ದಿವಸಗಳಾದರೂ, ಒಂದು ತಿಂಗಳಾದರೂ, ಒಂದು ವರ್ಷವಾದರೂ ಗುಡಾರದ ಮೇಲೆ ನೆಲೆಸಿ ತಡಮಾಡಿದರೆ ಇಸ್ರಾಯೇಲರು ಪ್ರಯಾಣ ಮಾಡದೆ ಅಲ್ಲೇ ಇಳಿದುಕೊಳ್ಳುತ್ತಿದ್ದರು. ಅದು ಮೇಲೆ ಎದ್ದಾಗ ಮಾತ್ರ ಅವರು ಪ್ರಯಾಣ ಮಾಡುತ್ತಿದ್ದರು.</verse>
				<verse number="23">ಯೆಹೋವ ದೇವರ ಆಜ್ಞೆಯ ಪ್ರಕಾರ ಅವರು ಇಳಿದುಕೊಳ್ಳುತ್ತಾ, ಯೆಹೋವ ದೇವರ ಆಜ್ಞೆಯ ಪ್ರಕಾರ ಪ್ರಯಾಣ ಮಾಡುತ್ತಾ ಇದ್ದರು. ಮೋಶೆಗೆ ಯೆಹೋವ ದೇವರು ಆಜ್ಞಾಪಿಸಿದಂತೆ ಯೆಹೋವ ದೇವರ ಅಪ್ಪಣೆಯನ್ನು ಕೈಗೊಳ್ಳುತ್ತಿದ್ದರು.</verse>
			</chapter>
			<chapter number="10">
				<verse number="1">ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಅವನಿಗೆ ಹೇಳಿದ್ದು:</verse>
				<verse number="2">“ನಕ್ಷೆಯ ಕೆಲಸದಿಂದ ಹೊಡೆದು ಮಾಡಿದ ಬೆಳ್ಳಿಯ ತಗಡಿನ ಎರಡು ತುತೂರಿಗಳನ್ನು ನೀನು ಮಾಡಿಸಬೇಕು. ಸಭೆಯನ್ನು ಕರೆಯುವುದಕ್ಕಾಗಿಯೂ, ಪಾಳೆಯಗಳ ಪ್ರಯಾಣಕ್ಕಾಗಿಯೂ ನೀನು ಅವುಗಳನ್ನು ಉಪಯೋಗಿಸಬೇಕು.</verse>
				<verse number="3">ಅವುಗಳನ್ನು ಊದುವಾಗ ಜನರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಿಲಿಗೆ ಕೂಡಿಬರಬೇಕು.</verse>
				<verse number="4">ಒಂದನ್ನು ಮಾತ್ರ ಊದುವಾಗ, ಇಸ್ರಾಯೇಲರಲ್ಲಿ ಮುಖ್ಯಸ್ಥರಾದ ಪ್ರಧಾನರು ನಿನ್ನ ಬಳಿಗೆ ಕೂಡಿಬರಬೇಕು.</verse>
				<verse number="5">ನೀವು ಜಯಧ್ವನಿಯಂತೆ ಊದುವಾಗ ಪೂರ್ವದಲ್ಲಿ ಇಳಿದುಕೊಳ್ಳುವ ಪಾಳೆಯಗಳು ಮುಂದೆ ಹೊರಡಬೇಕು.</verse>
				<verse number="6">ನೀವು ಎರಡನೆಯ ಸಾರಿ ಆರ್ಭಟವಾಗಿ ಊದುವಾಗ, ದಕ್ಷಿಣದಲ್ಲಿ ಇಳಿದುಕೊಳ್ಳುವ ಪಾಳೆಯಗಳು ಪ್ರಯಾಣ ಮಾಡಬೇಕು. ಅವರ ಪ್ರಯಾಣಕ್ಕೆ ಹೊರಡಬೇಕಾದಾಗ ಆರ್ಭಟವಾಗಿ ಊದಬೇಕು.</verse>
				<verse number="7">ಆದರೆ ಸಭೆಯನ್ನು ಕೂಡಿಸುವಾಗ ನೀವು ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಊದಿಸಬೇಡಿರಿ.</verse>
				<verse number="8">“ಯಾಜಕರಾಗಿರುವ ಆರೋನನ ಪುತ್ರರು ತುತೂರಿಗಳನ್ನು ಊದಬೇಕು. ಇವು ನಿಮ್ಮ ಸಂತತಿಗಳಲ್ಲಿ ನಿಮಗೆ ನಿತ್ಯವಾದ ಕಟ್ಟಳೆಯಾಗಿರಬೇಕು.</verse>
				<verse number="9">ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರವಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ಜನರನ್ನು ಎಚ್ಚರಿಸುವಂತೆ ತುತೂರಿಗಳನ್ನು ಆರ್ಭಟವಾಗಿ ಊದಬೇಕು. ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ನೆನಪು ಮಾಡಿಕೊಂಡು ಶತ್ರುಗಳಿಂದ ನಿಮ್ಮನ್ನು ಬಿಡಿಸುವನು.</verse>
				<verse number="10">ನಿಮ್ಮ ಸಂತೋಷದ ದಿವಸದಲ್ಲಿಯೂ, ನಿಮ್ಮ ಹಬ್ಬಗಳಲ್ಲಿಯೂ ನಿಮ್ಮ ತಿಂಗಳಿನ ಆರಂಭದಲ್ಲಿಯೂ ತುತೂರಿಗಳನ್ನು ಊದಬೇಕು. ನಿಮ್ಮ ದಹನಬಲಿಗಳನ್ನೂ ಸಮಾಧಾನದ ಬಲಿಯನ್ನೂ ಅರ್ಪಿಸುವಾಗ ಅವುಗಳನ್ನು ಊದಬೇಕು. ಅವುಗಳ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.”</verse>
				<verse number="11">ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎದ್ದಿತು.</verse>
				<verse number="12">ಆಗ ಇಸ್ರಾಯೇಲರು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಮರುಭೂಮಿಯಿಂದ ಪ್ರಯಾಣಮಾಡಿದರು. ಮೇಘವು ಪಾರಾನ್ ಎಂಬ ಮರುಭೂಮಿಯಲ್ಲಿ ಇಳಿಯಿತು.</verse>
				<verse number="13">ಆಗ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಪ್ರಯಾಣಮಾಡಿದ್ದು ಇದು ಮೊದಲನೇ ಸಾರಿ.</verse>
				<verse number="14">ಯೆಹೂದನ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅಮ್ಮೀನಾದಾಬನ ಮಗ ನಹಶೋನನು ಇದ್ದನು.</verse>
				<verse number="15">ಇಸ್ಸಾಕಾರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂವಾರನ ಮಗ ನೆತನೆಯೇಲ್ ಇದ್ದನು.</verse>
				<verse number="16">ಜೆಬುಲೂನನ ಗೋತ್ರದ ಸೈನ್ಯದ ಮೇಲೆ ಹೇಲೋನನ ಮಗ ಎಲೀಯಾಬನು ಇದ್ದನು.</verse>
				<verse number="17">ಆಗ ದೇವದರ್ಶನದ ಗುಡಾರವನ್ನು ಇಳಿಸಿದಾಗ ಗೇರ್ಷೋನನ ಮಕ್ಕಳೂ, ಮೆರಾರೀಯರೂ ಗುಡಾರವನ್ನು ಹೊತ್ತುಕೊಂಡು ಮುಂದೆ ಹೊರಟರು.</verse>
				<verse number="18">ರೂಬೇನನ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಶೆದೇಯೂರನ ಮಗ ಎಲೀಚೂರನು ಇದ್ದನು.</verse>
				<verse number="19">ಸಿಮೆಯೋನನ ಗೋತ್ರದ ಸೈನ್ಯದ ಮೇಲೆ ಚುರೀಷದ್ದೈಯನ ಮಗ ಶೆಲುಮೀಯೇಲನು ಇದ್ದನು.</verse>
				<verse number="20">ಗಾದನ ಗೋತ್ರದ ಸೈನ್ಯದ ಮೇಲೆ ದೆವುಯೇಲನ ಮಗ ಎಲ್ಯಾಸಾಫನು ಇದ್ದನು.</verse>
				<verse number="21">ಅವರ ಹಿಂದೆ ಪರಿಶುದ್ಧ ವಸ್ತುಗಳನ್ನು ಹೊರುವ ಕೊಹಾತ್ಯರು ಹೊರಟರು. ಇವರು ಬರುವಷ್ಟರೊಳಗೆ ಉಳಿದ ಲೇವಿಯರು ಗುಡಾರವನ್ನು ನಿಲ್ಲಿಸಿದರು.</verse>
				<verse number="22">ಎಫ್ರಾಯೀಮನ ಪಾಳೆಯದ ಧ್ವಜವು ಅವನ ಸೈನ್ಯಗಳ ಪ್ರಕಾರ ಹೊರಟಿತು. ಅವರ ಸೈನ್ಯದ ಮೇಲೆ ಅಮ್ಮೀಹೂದನ ಮಗ ಎಲೀಷಾಮನು ಇದ್ದನು.</verse>
				<verse number="23">ಮನಸ್ಸೆಯ ಗೋತ್ರದ ಮೇಲೆ ಪೆದಾಚೂರನ ಮಗ ಗಮಲಿಯೇಲನು ಇದ್ದನು.</verse>
				<verse number="24">ಬೆನ್ಯಾಮೀನನ ಗೋತ್ರದ ಸೈನ್ಯದ ಮೇಲೆ ಗಿದ್ಯೋನಿಯ ಮಗ ಅಬೀದಾನನು ಇದ್ದನು.</verse>
				<verse number="25">ದಾನನ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅಮ್ಮೀಷದ್ದೈಯನ ಮಗ ಅಹೀಗೆಜೆರನು ಇದ್ದನು.</verse>
				<verse number="26">ಆಶೇರನ ಗೋತ್ರದ ಸೈನ್ಯಗಳ ಮೇಲೆ ಒಕ್ರಾನನ ಮಗ ಪಗೀಯೇಲನು ಇದ್ದನು.</verse>
				<verse number="27">ನಫ್ತಾಲಿಯ ಗೋತ್ರದ ಸೈನ್ಯದ ಮೇಲೆ ಏನಾನ ಮಗ ಅಹೀರನು ಇದ್ದನು.</verse>
				<verse number="28">ಈ ಪ್ರಕಾರ ಇಸ್ರಾಯೇಲರು ತಮ್ಮ ಗೋತ್ರಗಳ ಪ್ರಕಾರ ಪ್ರಯಾಣವಾಗಿ ಹೊರಟರು.</verse>
				<verse number="29">ಮೋಶೆ ತನ್ನ ಮಾವನಾಗಿದ್ದ ಮಿದ್ಯಾನನಾದ ರೆಯೂವೇಲನ ಮಗ ಹೊಬಾಬನಿಗೆ, “ಯೆಹೋವ ದೇವರು ನಮಗೆ ಕೊಡುತ್ತೇನೆಂದು ಹೇಳಿದ ದೇಶಕ್ಕೆ ಪ್ರಯಾಣ ಮಾಡುತ್ತಿದ್ದೇವೆ. ನಮ್ಮ ಸಂಗಡ ನೀನೂ ಬಾ, ನಾವು ನಿನಗೆ ಒಳ್ಳೆಯದನ್ನು ಮಾಡುವೆವು. ಏಕೆಂದರೆ ಯೆಹೋವ ದೇವರು ಇಸ್ರಾಯೇಲರನ್ನು ಕುರಿತು ಒಳ್ಳೆಯವುಗಳನ್ನು ವಾಗ್ದಾನ ಮಾಡಿದ್ದಾರೆ,” ಎಂದು ಹೇಳಿದನು.</verse>
				<verse number="30">ಆಗ ಅವನು ಅವನಿಗೆ, “ನಾನು ಬರುವುದಿಲ್ಲ. ನನ್ನ ದೇಶಕ್ಕೂ ನನ್ನ ಬಂಧುಗಳ ಬಳಿಗೂ ನಾನು ಹೋಗುತ್ತೇನೆ,” ಎಂದನು.</verse>
				<verse number="31">ಅದಕ್ಕೆ ಮೋಶೆ, “ನಮ್ಮನ್ನು ಬಿಡಬೇಡ. ಏಕೆಂದರೆ ನಾವು ಎಲ್ಲಿ ಇಳಿದುಕೊಳ್ಳಬೇಕೆಂಬುದು ನಿನಗೆ ಮಾತ್ರ ತಿಳಿದಿದೆ. ನೀನು ನಮಗೆ ಕಣ್ಣುಗಳಾಗಿರುವೆ.</verse>
				<verse number="32">ನೀನು ನಮ್ಮ ಸಂಗಡ ಬಂದರೆ ಯೆಹೋವ ದೇವರು ನಮಗೆ ಕೊಡುವುದಕ್ಕಿರುವ ಒಳ್ಳೆಯದನ್ನು ನಾವು ನಿನ್ನೊಂದಿಗೆ ಹಂಚಿಕೊಳ್ಳುವೆವು,” ಎಂದನು.</verse>
				<verse number="33">ಅವರು ಯೆಹೋವ ದೇವರ ಪರ್ವತದ ಬಳಿಯಿಂದ ಮೂರು ದಿವಸಗಳವರೆಗೆ ಪ್ರಯಾಣಮಾಡಿದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅವರಿಗೆ ಇಳಿದುಕೊಳ್ಳುವ ಸ್ಥಳವನ್ನು ಹುಡುಕುವುದಕ್ಕೆ ಅವರ ಮೂರು ದಿವಸಗಳ ಪ್ರಯಾಣದಲ್ಲಿ ಅವರ ಮುಂದಾಗಿ ಹೋಯಿತು.</verse>
				<verse number="34">ಅವರು ಪಾಳೆಯದಿಂದ ಹೊರಟಾಗ, ಯೆಹೋವ ದೇವರ ಮೇಘವು ಹಗಲಿನಲ್ಲಿ ಅವರ ಮೇಲೆ ಇತ್ತು.</verse>
				<verse number="35">ಇದಲ್ಲದೆ ಮಂಜೂಷವು ಹೊರಡುವಾಗ ಮೋಶೆಯು ಹೀಗೆ ಹೇಳುತ್ತಿದ್ದನು, “ಯೆಹೋವ ದೇವರೇ, ಎದ್ದೇಳಿರಿ, ನಿಮ್ಮ ಶತ್ರುಗಳು ಚದರಿಹೋಗಲಿ. ನಿಮ್ಮನ್ನು ಹಗೆ ಮಾಡುವವರು ನಿಮ್ಮ ಎದುರಿನಿಂದ ಓಡಿಹೋಗಲಿ.”</verse>
				<verse number="36">ಮಂಜೂಷವು ನಿಂತಾಗ ಅವನು ಹೀಗೆ ಹೇಳುತ್ತಿದ್ದನು, “ಯೆಹೋವ ದೇವರೇ, ಸಾವಿರಾರು ಇಸ್ರಾಯೇಲರ ಕುಟುಂಬಗಳ ಬಳಿಗೆ ಹಿಂದಿರುಗು.”</verse>
			</chapter>
			<chapter number="11">
				<verse number="1">ಇಸ್ರಾಯೇಲ್ ಜನರು ತಮಗೆ ಕಷ್ಟವಾಯಿತೆಂದು ಗೊಣಗುಟ್ಟಿದಾಗ, ಯೆಹೋವ ದೇವರು ಅದನ್ನು ಕೇಳಿ ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿ ಬೀಳುವಂತೆ ಮಾಡಿದ್ದರಿಂದ ಅವರ ಪಾಳೆಯದ ಕಟ್ಟಕಡೆಯ ಭಾಗದಲ್ಲಿದ್ದವರು ಸುಟ್ಟುಹೋದರು.</verse>
				<verse number="2">ಆಗ ಜನರು ಮೋಶೆಗೆ ಕೂಗಿಕೊಂಡದ್ದರಿಂದ, ಮೋಶೆಯು ಯೆಹೋವ ದೇವರಿಗೆ ಪ್ರಾರ್ಥನೆಮಾಡಿದನು ಆಗ ಬೆಂಕಿಯು ಆರಿಹೋಯಿತು.</verse>
				<verse number="3">ಯೆಹೋವ ದೇವರು ಹತ್ತಿಸಿದ ಬೆಂಕಿಯು ಅವರಲ್ಲಿ ದಹಿಸಿದ್ದರಿಂದ ಆ ಸ್ಥಳಕ್ಕೆ ತಬೇರ ಎಂದು ಹೆಸರಿಟ್ಟರು.</verse>
				<verse number="4">ಅವರೊಳಗಿದ್ದ ಮಿಶ್ರ ಗುಂಪಿನ ಜನರು ಮಾಂಸಕ್ಕಾಗಿ ದುರಾಶೆಪಟ್ಟರು. ಇಸ್ರಾಯೇಲರು ಸಹ ತಿರುಗಿ ಅಳುತ್ತಾ, “ನಮಗೆ ಮಾಂಸವನ್ನು ತಿನ್ನುವುದಕ್ಕೆ ಕೊಡುವವರು ಯಾರು?</verse>
				<verse number="5">ನಾವು ಈಜಿಪ್ಟ್ ದೇಶದಲ್ಲಿ ಉಚಿತವಾಗಿ ತಿಂದ ಮೀನನ್ನೂ ಸವತೆ ಕಾಯಿಯನ್ನೂ ಕರ್ಬೂಜಗಳನ್ನೂ ನೀರುಳ್ಳಿ ಈರುಳ್ಳಿ ಬೆಳ್ಳುಳ್ಳಿಗಳನ್ನೂ ಜ್ಞಾಪಿಸಿಕೊಳ್ಳುತ್ತೇವೆ.</verse>
				<verse number="6">ಆದರೆ ಈಗ ನಮ್ಮ ಪ್ರಾಣವು ಬತ್ತಿಹೋಯಿತು, ಈ ಮನ್ನವಲ್ಲದೆ ಬೇರೆ ಯಾವುದೂ ನಮ್ಮ ಕಣ್ಣುಗಳ ಮುಂದೆ ಇರುವುದಿಲ್ಲ,” ಎಂದರು.</verse>
				<verse number="7">ಆ ಮನ್ನವು ಕೊತ್ತಂಬರಿ ಬೀಜದ ಹಾಗೆ ಇತ್ತು. ಅದು ಗುಗ್ಗುಲದಂತೆ ಕಾಣಿಸಿತು.</verse>
				<verse number="8">ಜನರು ಹೊರಗೆ ಹೋಗಿ ಅದನ್ನು ಕೂಡಿಸಿ, ಬೀಸುವ ಕಲ್ಲುಗಳಲ್ಲಿ ಬೀಸಿ ಇಲ್ಲವೆ ಒರಳಿನಲ್ಲಿ ಕುಟ್ಟಿ, ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡುತ್ತಿದ್ದರು. ಅದರ ರುಚಿಯು ಓಲಿವ್ ಎಣ್ಣೆಯಿಂದ ಮಾಡಿದ ರೊಟ್ಟಿಯಹಾಗೆ ಇತ್ತು.</verse>
				<verse number="9">ರಾತ್ರಿಯಲ್ಲಿ ಮಂಜು ಪಾಳೆಯದ ಮೇಲೆ ಬೀಳುವಾಗ ಅದರೊಂದಿಗೆ ಮನ್ನವು ಬೀಳುತ್ತಿತ್ತು.</verse>
				<verse number="10">ಆಗ ಪ್ರತಿಯೊಂದು ಕುಟುಂಬದ ಜನರು ತಮ್ಮ ಗುಡಾರದ ಬಾಗಿಲಿನಲ್ಲಿ ನಿಂತು ಅಳುವುದನ್ನು ಮೋಶೆ ಕೇಳಿದನು. ಯೆಹೋವ ದೇವರು ಬಹಳ ಕೋಪಗೊಂಡರು. ಮೋಶೆ ಗಲಿಬಿಲಿಗೊಂಡನು.</verse>
				<verse number="11">ಮೋಶೆಯು ಯೆಹೋವ ದೇವರಿಗೆ, “ಈ ಎಲ್ಲಾ ಜನರ ಭಾರವನ್ನು ನನ್ನ ಮೇಲೆ ಹೊರಿಸಿ ನೀವು ಏಕೆ ತೊಂದರೆಯನ್ನು ನಿಮ್ಮ ಸೇವಕನ ಮೇಲೆ ತಂದಿದ್ದೀರಿ? ನಿಮ್ಮನ್ನು ಅತೃಪ್ತಿಗೊಳಿಸಲು ನಾನೇನು ಮಾಡಿದ್ದೇನೆ?</verse>
				<verse number="12">ನಾನು ಈ ಎಲ್ಲಾ ಜನರನ್ನು ಗರ್ಭಧರಿಸಿ ಜನ್ಮವಿತ್ತೆನೋ? ದಾದಿಯು ಹಸುಗೂಸನ್ನು ಎತ್ತಿಕೊಂಡು ಹೋಗುವಂತೆ, ಈ ಜನರನ್ನು ತನ್ನ ತೋಳುಗಳಲ್ಲಿ ಎತ್ತಿಕೊಂಡು ಅವರ ಪಿತೃಗಳಿಗೆ ನೀವು ವಾಗ್ದಾನ ಮಾಡಿದ ದೇಶಕ್ಕೆ ನಡೆಸಬೇಕೆಂದು ನೀವು ನನಗೇಕೆ ಹೇಳಿದ್ದೀರಿ?</verse>
				<verse number="13">ಈ ಸಮಸ್ತ ಜನರಿಗೆ ಕೊಡುವುದಕ್ಕೆ ಮಾಂಸವು ನನಗೆ ಎಲ್ಲಿಂದ ದೊರಕುವುದು? ‘ನಮಗೆ ತಿನ್ನಲು ಮಾಂಸವನ್ನು ಕೊಡು,’ ಎಂದು ನನ್ನ ಬಳಿಗೆ ಬಂದು ಅಳುತ್ತಿದ್ದಾರೆ.</verse>
				<verse number="14">ನಾನು ಒಬ್ಬೊಂಟಿಗನಾಗಿ ಈ ಸಮಸ್ತ ಜನರನ್ನು ಹೊತ್ತುಕೊಳ್ಳುವುದಕ್ಕೆ ಶಕ್ತನಲ್ಲ. ಅದು ನನಗೆ ಅತಿದೊಡ್ಡ ಭಾರವಾಗಿದೆ.</verse>
				<verse number="15">ಈ ರೀತಿಯಲ್ಲಿ ನೀವು ನನ್ನನ್ನು ನಡೆಸುವುದಾದರೆ, ಈಗಲೇ ನನ್ನನ್ನು ಕೊಂದುಬಿಡಿ. ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆತರೆ, ನಾನು ನನ್ನ ಸ್ವಂತ ನಾಶವನ್ನು ಎದುರಿಸದಂತೆ ಕಾಪಾಡಿ,” ಎಂದನು.</verse>
				<verse number="16">ಯೆಹೋವ ದೇವರು ಮೋಶೆಗೆ, “ಜನರ ನಾಯಕರೆಂದೂ, ಹಿರಿಯರೆಂದೂ, ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂತಹ ಇಸ್ರಾಯೇಲರ ಹಿರಿಯರೊಳಗಿರುವ ಎಪ್ಪತ್ತು ಮಂದಿಯನ್ನು ಕೂಡಿಸಿ, ಅವರನ್ನು ದೇವದರ್ಶನದ ಗುಡಾರದ ಕಡೆಗೆ ಕರೆದುಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ.</verse>
				<verse number="17">ಆಗ ನಾನು ಇಳಿದುಬಂದು, ಅಲ್ಲಿ ನಿನ್ನ ಸಂಗಡ ಮಾತನಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಸ್ವಲ್ಪವನ್ನು ಅವರಿಗೂ ಕೊಡುವೆನು. ಆಗ ನೀನು ಅದನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಜನರ ಭಾರವನ್ನು ಹೊರುವರು,” ಎಂದು ಹೇಳಿದರು.</verse>
				<verse number="18">ಜನರಿಗೆ ನೀನು, “ ‘ನಾಳೆಗಾಗಿ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ. ನಮಗೆ ಯಾವನು ಮಾಂಸವನ್ನು ತಿನ್ನುವುದಕ್ಕೆ ಕೊಡುವನು? ಈಜಿಪ್ಟ್ ದೇಶದಲ್ಲಿ ನಮಗೆ ಒಳ್ಳೆಯದು ಇತ್ತು,’ ಎಂದು ಹೇಳಿ, ಯೆಹೋವ ದೇವರು ಕೇಳುವಂತೆ ಅತ್ತಿರಿ. ಆದಕಾರಣ ಯೆಹೋವ ದೇವರು ನಿಮಗೆ ತಿನ್ನುವುದಕ್ಕೆ ಮಾಂಸವನ್ನು ಕೊಡುವನು ಮತ್ತು ನೀವು ಅದನ್ನು ತಿನ್ನುವಿರಿ.</verse>
				<verse number="19">ನೀವು ತಿನ್ನುವುದು ಒಂದು ದಿನವಲ್ಲ, ಎರಡು ದಿನವೂ ಅಲ್ಲ, ಐದು ದಿನವೂ ಅಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವೂ ಅಲ್ಲ.</verse>
				<verse number="20">ಅದು ನಿಮ್ಮ ಮೂಗಿನಿಂದ ಬಂದು, ನಿಮಗೆ ಅಸಹ್ಯವಾಗುವ ತನಕ ಪೂರ್ತಿ ತಿಂಗಳವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಯೆಹೋವ ದೇವರನ್ನು ಅಲಕ್ಷ್ಯಮಾಡಿ, ಅವರ ಎದುರಿನಲ್ಲಿ ಅತ್ತು, ‘ನಾವು ಏಕೆ ಈಜಿಪ್ಟಿನಿಂದ ಬಂದೆವು,’ ಎಂದು ಹೇಳುತ್ತೀರಲ್ಲಾ, ಎಂದು ಹೇಳು,” ಎಂದರು.</verse>
				<verse number="21">ಆದರೆ ಮೋಶೆಯು, “ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಅವರು ಒಂದು ತಿಂಗಳು ಪೂರ್ತಿ ತಿನ್ನುವ ಹಾಗೆ, ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀವು ಹೇಳಿದ್ದೀರಿ.</verse>
				<verse number="22">ಅವರಿಗೆ ಸಾಕಾಗುವ ಹಾಗೆ ಕುರಿದನಗಳನ್ನು ಅವರಿಗೋಸ್ಕರ ಕೊಯ್ಯಬೇಕೋ? ಅವರಿಗೆ ಸಾಕಾಗುವ ಹಾಗೆ ಸಮುದ್ರದ ಮೀನುಗಳನ್ನೆಲ್ಲಾ ಕೂಡಿಸಿ ತರಬೇಕೋ?” ಎಂದು ಕೇಳಿದನು.</verse>
				<verse number="23">ಯೆಹೋವ ದೇವರು ಮೋಶೆಗೆ, “ಯೆಹೋವ ದೇವರ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ, ಇಲ್ಲವೋ ಎಂದು ನೀನು ನೋಡುವೆ,” ಎಂದರು.</verse>
				<verse number="24">ಆಗ ಮೋಶೆ ಹೋಗಿ ಯೆಹೋವ ದೇವರ ಮಾತುಗಳನ್ನು ಜನರಿಗೆ ಹೇಳಿ, ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ, ಗುಡಾರದ ಸುತ್ತಲೂ ನಿಲ್ಲಿಸಿದನು.</verse>
				<verse number="25">ಯೆಹೋವ ದೇವರು ಮೇಘದೊಳಗಿಂದ ಇಳಿದು, ಅವನ ಸಂಗಡ ಮಾತನಾಡಿ, ಅವನ ಮೇಲಿರುವ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ತೆಗೆದು, ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟರು. ಆದ್ದರಿಂದ ಆತ್ಮವು ಅವರ ಮೇಲೆ ನೆಲೆಯಾಗಿದ್ದಾಗ ಅವರು ಪ್ರವಾದಿಸಿದರು. ಆಮೇಲೆ ಅವರು ಪ್ರವಾದಿಸಲಿಲ್ಲ.</verse>
				<verse number="26">ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್. ಮತ್ತೊಬ್ಬನ ಹೆಸರು ಮೇದಾದ್. ಇವರು ನಾಯಕರ ಪಟ್ಟಿಯಲ್ಲಿದ್ದವರಾಗಿದ್ದರು. ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಗುಡಾರಕ್ಕೆ ಹೊರಟು ಹೋಗದೆ, ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು.</verse>
				<verse number="27">ಆಗ ಒಬ್ಬ ಯೌವನಸ್ಥನು ಓಡಿಬಂದು ಮೋಶೆಗೆ, “ಎಲ್ದಾದನೂ, ಮೇದಾದನೂ ಪಾಳೆಯದಲ್ಲಿ ಪ್ರವಾದಿಸುತ್ತಾರೆ,” ಎಂದನು.</verse>
				<verse number="28">ಅದಕ್ಕೆ ಯೌವನಸ್ಥರಲ್ಲಿ ಒಬ್ಬನೂ, ಮೋಶೆಯ ಸೇವಕನೂ ಆಗಿದ್ದ ನೂನನ ಮಗ ಯೆಹೋಶುವನು, “ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ,” ಎಂದನು.</verse>
				<verse number="29">ಮೋಶೆಯು ಅವನಿಗೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚು ಪಡುತ್ತೀಯೋ? ಯೆಹೋವ ದೇವರ ಜನರೆಲ್ಲಾ ಪ್ರವಾದಿಗಳಾಗಿದ್ದು, ಯೆಹೋವ ದೇವರು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೆಯದು,” ಎಂದನು.</verse>
				<verse number="30">ಆಗ ಮೋಶೆಯೂ, ಇಸ್ರಾಯೇಲರ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು.</verse>
				<verse number="31">ಯೆಹೋವ ದೇವರ ಕಡೆಯಿಂದ ಒಂದು ಗಾಳಿಯು ಹೊರಟು ಸಮುದ್ರದ ಕಡೆಯಿಂದ ಲಾವಕ್ಕಿಗಳನ್ನು ತಂದು, ಪಾಳೆಯದ ಸುತ್ತಲೂ ಈ ಕಡೆ ಒಂದು ದಿನದ ದೂರದ ಪ್ರಯಾಣದಷ್ಟು, ಆ ಕಡೆ ಒಂದು ದಿನದ ದೂರದ ಪ್ರಯಾಣದಷ್ಟು ಪಾಳೆಯದ ಬಳಿಯಲ್ಲಿ ಭೂಮಿಯ ಮೇಲೆ ಎರಡು ಮೊಳ ಎತ್ತರದಲ್ಲಿ ಅವುಗಳನ್ನು ಬೀಳುವಂತೆ ಮಾಡಿತು.</verse>
				<verse number="32">ಜನರು ಆ ದಿನವೆಲ್ಲಾ, ಆ ರಾತ್ರಿಯೆಲ್ಲಾ, ಮರು ದಿವಸವೆಲ್ಲಾ ಲಾವಕ್ಕಿಗಳನ್ನು ಕೂಡಿಸಿದರು. ಕಡಿಮೆ ಕೂಡಿಸಿದವನು ಸಾವಿರ ಕಿಲೋಗ್ರಾಮಿನಷ್ಟು ಕೂಡಿಸಿದನು. ಅವರು ಪಾಳೆಯದ ಸುತ್ತಲೂ ಅವುಗಳನ್ನು ಹರಡಿಕೊಂಡರು.</verse>
				<verse number="33">ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ, ಅದನ್ನು ಅಗಿಯುವುದಕ್ಕಿಂತ ಮುಂಚೆ ಯೆಹೋವ ದೇವರು ಜನರನ್ನು ಘೋರ ವ್ಯಾಧಿಯಿಂದ ಸಾಯಿಸಿದನು.</verse>
				<verse number="34">ಆಶೆ ಪಟ್ಟವರನ್ನು ಅಲ್ಲಿ ಹೂಳಿಟ್ಟಿದ್ದರಿಂದ ಆ ಸ್ಥಳಕ್ಕೆ ಕಿಬ್ರೋತ್ ಹತಾವ ಎಂದು ಹೆಸರಾಯಿತು.</verse>
				<verse number="35">ತರುವಾಯ ಜನರು ಕಿಬ್ರೋತ್ ಹತಾವದಿಂದ ಹೊರಟು ಹಚೇರೋತಿಗೆ ಪ್ರಯಾಣಮಾಡಿ ಬಂದು, ಅಲ್ಲಿ ಇಳಿದುಕೊಂಡರು.</verse>
			</chapter>
			<chapter number="12">
				<verse number="1">ಮೋಶೆಯು ಕೂಷ್ ದೇಶದ ಸ್ತ್ರೀಯನ್ನು ವಿವಾಹವಾಗಿದ್ದನು. ಆಕೆಯ ನಿಮಿತ್ತವಾಗಿ ಮಿರ್ಯಾಮಳೂ ಆರೋನನೂ ಮೋಶೆಗೆ ವಿರುದ್ಧವಾಗಿ ಮಾತನಾಡಲಿಕ್ಕೆ ಪ್ರಾರಂಭಿಸಿದರು.</verse>
				<verse number="2">ಅವರು, “ಯೆಹೋವ ದೇವರು ಮೋಶೆಯ ಮುಖಾಂತರ ಮಾತ್ರವೇ ಮಾತನಾಡಿದ್ದಾರೋ? ನಮ್ಮ ಮುಖಾಂತರ ಮಾತಾಡಲಿಲ್ಲವೋ?” ಎಂದರು. ಅವರು ಆಡಿದ ಮಾತು ಯೆಹೋವ ದೇವರಿಗೆ ಕೇಳಿಸಿತು.</verse>
				<verse number="3">ಆದರೆ ಮೋಶೆ ಎಂಬವನು ಭೂಲೋಕದಲ್ಲಿರುವ ಸಕಲ ಮನುಷ್ಯರೆಲ್ಲರಿಗಿಂತ ಬಹು ದೀನನಾಗಿದ್ದನು.</verse>
				<verse number="4">ಯೆಹೋವ ದೇವರು ಫಕ್ಕನೆ ಮೋಶೆಗೂ ಆರೋನನಿಗೂ ಮಿರ್ಯಾಮಳಿಗೂ, “ನೀವು ಮೂವರು ಹೊರಗೆ ದೇವದರ್ಶನ ಗುಡಾರದ ಸಮೀಪಕ್ಕೆ ಬನ್ನಿರಿ,” ಎಂದರು. ಆಗ ಆ ಮೂವರೂ ಹೊರಗೆ ಬಂದರು.</verse>
				<verse number="5">ಯೆಹೋವ ದೇವರು ಮೇಘ ಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು, ಆರೋನನನ್ನೂ ಮಿರ್ಯಾಮಳನ್ನೂ ಕರೆದಾಗ, ಅವರಿಬ್ಬರು ಮುಂದೆ ಬಂದರು.</verse>
				<verse number="6">ಯೆಹೋವ ದೇವರು ಅವರಿಗೆ ಹೀಗೆ ಹೇಳಿದನು, “ನನ್ನ ಮಾತುಗಳನ್ನು ಈಗ ಕೇಳಿರಿ: “ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಯೆಹೋವ ದೇವರಾದ ನಾನು ದರ್ಶನದಲ್ಲಿ ಪ್ರಕಟಿಸುವೆನು, ಇಲ್ಲವೆ ಕನಸಿನಲ್ಲಿಯೂ ನಾನು ಅವನೊಡನೆ ಮಾತನಾಡುವೆನು.</verse>
				<verse number="7">ಆದರೆ ನನ್ನ ಸೇವಕನಾದ ಮೋಶೆಯು ಹಾಗಲ್ಲ. ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಾನೆ.</verse>
				<verse number="8">ನಾನು ಗೂಢವಾಗಿ ಅಲ್ಲ ಸ್ಪಷ್ಟವಾಗಿ, ಮುಖಾಮುಖಿಯಾಗಿ ಅಂದರೆ, ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವ ದೇವರ ರೂಪವನ್ನು ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?”</verse>
				<verse number="9">ಆಗ ಯೆಹೋವ ದೇವರು ಅವರ ಮೇಲೆ ಕೋಪಗೊಂಡು ಹೊರಟು ಹೋದರು.</verse>
				<verse number="10">ಆ ಮೇಘವು ಗುಡಾರದ ಮೇಲಿನಿಂದ ತೊಲಗಿ ಹೋಯಿತು. ಮಿರ್ಯಾಮಳು ಹಿಮದ ಹಾಗೆ ಕುಷ್ಠವುಳ್ಳವಳಾದಳು. ಆರೋನನು ಮಿರ್ಯಾಮಳ ಕಡೆಗೆ ನೋಡಿದಾಗ, ಇಗೋ, ಅವಳು ಕುಷ್ಠರೋಗಿಯಾಗಿದ್ದಳು.</verse>
				<verse number="11">ಆರೋನನು ಮೋಶೆಗೆ, “ಅಯ್ಯೋ ನನ್ನ ಒಡೆಯನೇ, ನಾವು ಪಾಪಮಾಡಿದೆವು. ಬುದ್ಧಿ ಇಲ್ಲದೆ ಮಾಡಿದ ಈ ಪಾಪವನ್ನು ನಮ್ಮ ಮೇಲೆ ಹಾಕಬೇಡ.</verse>
				<verse number="12">ತನ್ನ ತಾಯಿಯ ಗರ್ಭದಿಂದ ಹೊರಗೆ ಬಂದಾಗಲೇ ಅರ್ಧ ಮಾಂಸ ಕೊಳೆತು ಹೋದ ಶಿಶುವಿನ ಶವದಂತೆ ಆಕೆಯನ್ನು ಇರಗೊಡಿಸಬೇಡ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ,” ಎಂದನು.</verse>
				<verse number="13">ಮೋಶೆಯು ಯೆಹೋವ ದೇವರಿಗೆ, “ದೇವರೇ, ಅವಳನ್ನು ಈಗ ಗುಣಪಡಿಸು, ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ,” ಎಂದನು.</verse>
				<verse number="14">ಆಗ ಯೆಹೋವ ದೇವರು ಮೋಶೆಗೆ, “ಆಕೆಯ ತಂದೆ ಅವಳ ಮುಖದ ಮೇಲೆ ಉಗುಳಿದರೆ, ಆಕೆ ಏಳು ದಿನ ನಾಚಿಕೆಯಿಂದ ಮರೆಯಾಗಿರುವುದಿಲ್ಲವೇ? ಹಾಗಾದರೆ ಆಕೆಯು ಏಳು ದಿವಸ ಪಾಳೆಯದ ಹೊರಗೆ ಇರಲಿ, ತರುವಾಯ ಅವಳನ್ನು ನೀನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು,” ಎಂದರು.</verse>
				<verse number="15">ಹಾಗೆಯೇ ಮಿರ್ಯಾಮಳನ್ನು ಪಾಳೆಯದ ಹೊರಗೆ ಏಳು ದಿವಸ ಮರೆಯಾಗಿ ಇಟ್ಟರು. ಮಿರ್ಯಾಮಳು ತಿರುಗಿ ಒಳಗೆ ಬರುವವರೆಗೆ ಜನರು ಪ್ರಯಾಣ ಮಾಡಲಿಲ್ಲ.</verse>
				<verse number="16">ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್ ಮರುಭೂಮಿಯಲ್ಲಿ ಇಳಿದುಕೊಂಡರು.</verse>
			</chapter>
			<chapter number="13">
				<verse number="1">ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,</verse>
				<verse number="2">“ನಾನು ಇಸ್ರಾಯೇಲರಿಗೆ ಕೊಡುವ ಕಾನಾನ್ ದೇಶವನ್ನು ಪರೀಕ್ಷಿಸುವ ಹಾಗೆ ನೀನು ಜನರನ್ನು ಕಳುಹಿಸು. ಅವರವರ ಪಿತೃಗಳ ಗೋತ್ರದ ಪ್ರಕಾರ ಅವರೊಳಗೆ ಅಧಿಕಾರಿಯಾಗಿರುವ ಪ್ರತಿಯೊಬ್ಬನನ್ನು ಕಳುಹಿಸು,” ಎಂದರು.</verse>
				<verse number="3">ಆಗ ಮೋಶೆಯು ಯೆಹೋವ ದೇವರ ಆಜ್ಞೆಯಂತೆ ಪಾರಾನ್ ಮರುಭೂಮಿಯಿಂದ ಅವರನ್ನು ಕಳುಹಿಸಿದನು. ಅವರೆಲ್ಲರೂ ಇಸ್ರಾಯೇಲರ ಮುಖ್ಯಸ್ಥರಾಗಿದ್ದರು.</verse>
				<verse number="4">ಅವರ ಹೆಸರುಗಳು ಯಾವುವೆಂದರೆ: ರೂಬೇನನ ಗೋತ್ರದ ಜಕ್ಕೂರನ ಮಗ ಶಮ್ಮೂವ,</verse>
				<verse number="5">ಸಿಮೆಯೋನ್ ಗೋತ್ರದ ಹೋರಿಯನ ಮಗ ಶಾಫಾಟನು,</verse>
				<verse number="6">ಯೆಹೂದ ಗೋತ್ರದ ಯೆಫುನ್ನೆಯ ಮಗ ಕಾಲೇಬನು,</verse>
				<verse number="7">ಇಸ್ಸಾಕಾರ್ ಗೋತ್ರದ ಯೋಸೇಫನ ಮಗ ಇಗಾಲ್,</verse>
				<verse number="8">ಎಫ್ರಾಯೀಮ್ ಗೋತ್ರದ ನೂನನ ಮಗ ಹೋಶೇಯ,</verse>
				<verse number="9">ಬೆನ್ಯಾಮೀನ್ ಗೋತ್ರದ ರಾಫೂವನ ಮಗ ಪಲ್ಟೀ,</verse>
				<verse number="10">ಜೆಬುಲೂನ್ ಗೋತ್ರದ ಸೋದೀಯ ಮಗ ಗದ್ದೀಯೇಲ್,</verse>
				<verse number="11">ಯೋಸೇಫನ ಗೋತ್ರ ಅಂದರೆ ಮನಸ್ಸೆ ಗೋತ್ರದ ಸೂಸೀಯ ಮಗ ಗದ್ದೀ,</verse>
				<verse number="12">ದಾನನ ಗೋತ್ರದ ಗೆಮಲ್ಲೀಯನ ಮಗ ಅಮ್ಮಿಯೇಲ್,</verse>
				<verse number="13">ಆಶೇರ್ ಗೋತ್ರದ ಮೀಕಾಯೇಲನ ಮಗ ಸೆತೂರ್,</verse>
				<verse number="14">ನಫ್ತಾಲಿ ಗೋತ್ರದ ವಾಪೆಸೀಯನ ಮಗ ನಹಬೀ.</verse>
				<verse number="15">ಗಾದನ ಗೋತ್ರದ ಮಾಕೀಯನ ಮಗ ಗೆಯೂಯೇಲ್.</verse>
				<verse number="16">ದೇಶವನ್ನು ಸಂಚರಿಸಿ ನೋಡುವುದಕ್ಕಾಗಿ ಮೋಶೆ ಕಳುಹಿಸಿದ ಮನುಷ್ಯರ ಹೆಸರುಗಳು ಇವೇ. ಮೋಶೆ ನೂನನ ಮಗ ಹೋಶೇಯನಿಗೆ ಯೆಹೋಶುವ ಎಂದು ಹೆಸರಿಟ್ಟನು.</verse>
				<verse number="17">ಮೋಶೆ ಕಾನಾನ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಅವರನ್ನು ಕಳುಹಿಸುವಾಗ ಅವರಿಗೆ, “ನೀವು ನೆಗೆವ ಮಾರ್ಗವಾಗಿ ಮಲೆನಾಡಿಗೆ ಹತ್ತಿಹೋಗಿರಿ,</verse>
				<verse number="18">ಆ ದೇಶವು ಎಂಥಾದ್ದೋ? ಅದರಲ್ಲಿ ವಾಸಿಸುವ ಜನರು ಬಲವುಳ್ಳವರೋ, ಬಲಹೀನರೋ? ಸ್ವಲ್ಪ ಜನರೋ, ಬಹಳ ಜನರೋ? ಎಂದೂ,</verse>
				<verse number="19">ಅವರು ವಾಸಿಸುವ ದೇಶವು ಎಂಥಾದ್ದೋ? ಅದು ಒಳ್ಳೆಯದಾಗಿದೆಯೋ, ಕೆಟ್ಟದ್ದಾಗಿದೆಯೋ? ಅವರು ವಾಸಿಸುವ ಪಟ್ಟಣಗಳು ಎಂಥವುಗಳೋ? ಅವರು ವಾಸಿಸುವುದು ಡೇರೆಗಳಲ್ಲಿಯೋ, ಬಲವಾದ ಕೋಟೆಗಳಲ್ಲಿಯೋ? ಎಂದೂ,</verse>
				<verse number="20">ಆ ಭೂಮಿಯು ಎಂಥಾದ್ದೋ? ಸಾರವಾದದ್ದೋ? ನಿಸ್ಸಾರವಾದದ್ದೋ? ಮರಗಳುಳ್ಳದ್ದೋ? ಇಲ್ಲದಿರುವುದೋ? ಎಂದು ನೋಡಿರಿ. ನೀವು ಧೈರ್ಯವುಳ್ಳವರಾಗಿದ್ದು, ಆ ಭೂಮಿಯ ಫಲವನ್ನು ತರಬೇಕು,” ಎಂದನು. ಆ ಕಾಲವು ಪ್ರಥಮ ದ್ರಾಕ್ಷಿ ಹಣ್ಣುಗಳ ಕಾಲವಾಗಿತ್ತು.</verse>
				<verse number="21">ಆಗ ಅವರು ಏರಿಹೋಗಿ ಚಿನ್ ಎಂಬ ಮರುಭೂಮಿಯಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನವರೆಗೂ ದೇಶವನ್ನು ಸಂಚರಿಸಿ ನೋಡಿದರು.</verse>
				<verse number="22">ಅವರು ನೆಗೆವನ್ನು ದಾಟಿ ಹೆಬ್ರೋನಿನವರೆಗೆ ಬಂದರು. ಅಲ್ಲಿ ಅನಾಕನ ಮಕ್ಕಳಾದ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳು ಮೊದಲು ನಿರ್ಮಿಸಲಾಗಿತ್ತು.</verse>
				<verse number="23">ಅವರು ಎಷ್ಕೋಲ್ ಹಳ್ಳದವರೆಗೂ ಬಂದು, ಅಲ್ಲಿ ದ್ರಾಕ್ಷಿ ಹಣ್ಣುಗಳ ಗೊಂಚಲಿನ ಕೊಂಬೆಯನ್ನು ಕೊಯ್ದು, ಅದನ್ನು ಅಡ್ಡ ಕೋಲಿನ ಮೇಲೆ ಇಬ್ಬರಾಗಿ ಹೊತ್ತುಕೊಂಡು ಹೋದರು. ಇದಲ್ಲದೆ ದಾಳಿಂಬೆ, ಅಂಜೂರ ಹಣ್ಣುಗಳನ್ನು ತೆಗೆದುಕೊಂಡು ಹೋದರು.</verse>
				<verse number="24">ಇಸ್ರಾಯೇಲರು ಅಲ್ಲಿ ದ್ರಾಕ್ಷಿ ಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್ ಹಳ್ಳವೆಂದು ಹೆಸರಿಟ್ಟರು.</verse>
				<verse number="25">ಅವರು ದೇಶವನ್ನು ಸಂಚರಿಸಿ ನೋಡಿ, ನಲವತ್ತು ದಿವಸಗಳಾದ ಮೇಲೆ ತಿರುಗಿ ಬಂದರು.</verse>
				<verse number="26">ಅವರು ಹೋಗಿ ಮೋಶೆ ಆರೋನರ ಬಳಿಗೂ, ಇಸ್ರಾಯೇಲರ ಸಮಸ್ತ ಸಭೆಯ ಬಳಿಗೂ ಪಾರಾನ್ ಮರುಭೂಮಿಯಲ್ಲಿರುವ ಕಾದೇಶಿಗೂ ಬಂದು, ಅವರಿಗೂ, ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ, ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.</verse>
				<verse number="27">ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು. ಅದು ನಿಜವಾಗಿಯೂ ಹಾಲೂ ಜೇನೂ ಹರಿಯುವ ದೇಶವೇ. ಅದರ ಫಲವು ಇವೇ.</verse>
				<verse number="28">ಆದರೆ ಆ ದೇಶದಲ್ಲಿ ವಾಸವಾಗಿರುವ ಜನರು ಬಲಿಷ್ಠರು. ಪಟ್ಟಣಗಳು ಭದ್ರವಾಗಿಯೂ, ಬಹಳ ದೊಡ್ಡದಾಗಿಯೂ ಇವೆ. ಅನಾಕನ ಮಕ್ಕಳನ್ನು ನಾವು ಅಲ್ಲಿ ಕಂಡೆವು.</verse>
				<verse number="29">ಅಮಾಲೇಕ್ಯರು ದೇಶದ ನೆಗೆವನಲ್ಲಿ ವಾಸವಾಗಿದ್ದಾರೆ. ಹಿತ್ತಿಯರೂ ಯೆಬೂಸಿಯರೂ ಅಮೋರಿಯರೂ ಪರ್ವತಗಳಲ್ಲಿಯೂ; ಕಾನಾನ್ಯರು ಸಮುದ್ರದ ಬಳಿಯಲ್ಲಿಯೂ ಯೊರ್ದನಿನ ತೀರದಲ್ಲಿಯೂ ವಾಸವಾಗಿದ್ದಾರೆ,” ಎಂದರು.</verse>
				<verse number="30">ನಂತರ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ, “ನಾವು ತಕ್ಷಣವೇ ಏರಿಹೋಗಿ ಅದನ್ನು ಸ್ವಾಧೀನ ಮಾಡಿಕೊಳ್ಳೋಣ. ಏಕೆಂದರೆ ಅದನ್ನು ಜಯಿಸಲು ನಾವು ನಿಜವಾಗಿಯೂ ಶಕ್ತರಾಗಿದ್ದೇವೆ,” ಎಂದನು.</verse>
				<verse number="31">ಆದರೆ ಅವನ ಸಂಗಡ ಹೋದ ಜನರು, “ಆ ಜನರ ಬಳಿಗೆ ಹೋಗುವುದಕ್ಕೆ ನಮ್ಮಿಂದಾಗುವುದಿಲ್ಲ, ಅವರು ನಮಗಿಂತ ಬಲಿಷ್ಠರಾಗಿದ್ದಾರೆ,” ಎಂದರು.</verse>
				<verse number="32">ಅವರು ಸಂಚರಿಸಿ ನೋಡಿದಂಥ ದೇಶದ ವಿಷಯವಾಗಿ ಇಸ್ರಾಯೇಲರಿಗೆ ಅಶುಭ ಸಮಾಚಾರವನ್ನು ಹೇಳುವವರಾಗಿ, “ನಾವು ಸಂಚರಿಸಿ ನೋಡಿ ಬಂದ ದೇಶವು ತನ್ನಲ್ಲಿ ವಾಸವಾಗಿರುವವರನ್ನೇ ತಿಂದುಬಿಡುವ ದೇಶವಾಗಿದೆ. ನಾವು ಅದರಲ್ಲಿ ನೋಡಿದ ಜನರೆಲ್ಲಾ ಮಹಾ ಶರೀರದ ಮನುಷ್ಯರು.</verse>
				<verse number="33">ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಮಹಾಶರೀರವುಳ್ಳ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳ ಹಾಗೆ ಇದ್ದೆವು. ಅವರ ದೃಷ್ಟಿಗೂ ನಾವು ಹಾಗೆಯೇ ಕಾಣಿಸಿದೆವು,” ಎಂದರು.</verse>
			</chapter>
			<chapter number="14">
				<verse number="1">ಆಗ ಜನರೆಲ್ಲರೂ ತಮ್ಮ ಸ್ವರವೆತ್ತಿ ಆ ರಾತ್ರಿಯೆಲ್ಲಾ ಅತ್ತರು.</verse>
				<verse number="2">ಇಸ್ರಾಯೇಲರೆಲ್ಲರು ಮೋಶೆಗೂ ಆರೋನನಿಗೂ ವಿರೋಧವಾಗಿ ಗೊಣಗುಟ್ಟಿದರು. ಅವರು, “ನಾವು ಈಜಿಪ್ಟ್ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಮರುಭೂಮಿಯಲ್ಲಾದರೂ ಸತ್ತಿದ್ದರೆ ಚೆನ್ನಾಗಿತ್ತು.</verse>
				<verse number="3">ನಾವು ಖಡ್ಗದಿಂದ ಕೊಲೆಯಾಗುವ ಹಾಗೆಯೂ ನಮ್ಮ ಹೆಂಡತಿಯರು ಮಕ್ಕಳು ಸುಲಿಗೆಯಾಗುವ ಹಾಗೆಯೂ ಯೆಹೋವ ದೇವರು ನಮ್ಮನ್ನು ಈ ದೇಶಕ್ಕೆ ಏಕೆ ಬರಮಾಡಿದ್ದಾರೆ? ಈಜಿಪ್ಟ್ ದೇಶಕ್ಕೆ ನಾವು ತಿರುಗಿ ಹೋಗುವುದು ನಮಗೆ ಒಳ್ಳೆಯದಲ್ಲವೋ?</verse>
				<verse number="4">ನಾವು ನಾಯಕನನ್ನು ನೇಮಿಸಿಕೊಂಡು ಈಜಿಪ್ಟ್ ದೇಶಕ್ಕೆ ಹಿಂದಿರುಗೋಣ ಬನ್ನಿರಿ,” ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು.</verse>
				<verse number="5">ಆಗ ಮೋಶೆಯೂ ಆರೋನನೂ ಇಸ್ರಾಯೇಲರ ಸಮಸ್ತ ಜನರ ಕೂಟದ ಮುಂದೆ ಅಡ್ಡಬಿದ್ದರು.</verse>
				<verse number="6">ಇದಲ್ಲದೆ ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿದ್ದ ನೂನನ ಮಗ ಯೆಹೋಶುವನೂ, ಯೆಫುನ್ನೆಯ ಮಗ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು,</verse>
				<verse number="7">ಇಸ್ರಾಯೇಲರ ಸಮಸ್ತ ಜನಸಮೂಹಕ್ಕೆ, “ಸಂಚರಿಸಿ ನೋಡುವುದಕ್ಕೆ ನಾವು ದಾಟಿಹೋದ ದೇಶವು ಅತ್ಯುತ್ತಮವಾದ ದೇಶವೇ.</verse>
				<verse number="8">ಯೆಹೋವ ದೇವರು ನಮ್ಮನ್ನು ಇಷ್ಟಪಟ್ಟರೆ ಹಾಲೂ ಜೇನೂ ಹರಿಯುವ ದೇಶವಾಗಿರುವ ಆ ದೇಶಕ್ಕೆ ನಮ್ಮನ್ನು ಬರಮಾಡಿ, ಅದನ್ನು ನಮಗೆ ಕೊಡುವರು.</verse>
				<verse number="9">ಆದ್ದರಿಂದ ನೀವಾದರೋ ಯೆಹೋವ ದೇವರಿಗೆ ತಿರುಗಿ ಬೀಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ನುಂಗಿಬಿಡುವೆವು. ಅವರ ಆಶ್ರಯವು ಅವರ ಬಳಿಯಿಂದ ಹೋಯಿತು. ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ, ಅವರಿಗೆ ಭಯಪಡಬೇಡಿರಿ,” ಎಂದರು.</verse>
				<verse number="10">ಆಗ ಸಭೆಯವರೆಲ್ಲರೂ ಅವರಿಗೆ ಕಲ್ಲೆಸೆಯಬೇಕೆಂದಿದ್ದರು. ಯೆಹೋವ ದೇವರ ಮಹಿಮೆಯು ದೇವದರ್ಶನ ಗುಡಾರದಲ್ಲಿ ಇಸ್ರಾಯೇಲರಿಗೆಲ್ಲಾ ಪ್ರತ್ಯಕ್ಷವಾಯಿತು.</verse>
				<verse number="11">ಆಗ ಯೆಹೋವ ದೇವರು ಮೋಶೆಗೆ, “ಈ ಜನರು ಎಷ್ಟರವರೆಗೆ ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ಮಾಡಿದ ಸಕಲ ಸೂಚಕಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಎಷ್ಟು ಮಾತ್ರಕ್ಕು ನಂಬದೆ ಇರುವರು?</verse>
				<verse number="12">ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲ ಮಾಡುವೆನು. ನಿನ್ನನ್ನು ಅವರಿಗಿಂತ ದೊಡ್ಡದಾದ ಮತ್ತು ಬಲವುಳ್ಳ ಜನಾಂಗವನ್ನಾಗಿ ಮಾಡುವೆನು,” ಎಂದರು.</verse>
				<verse number="13">ಆಗ ಮೋಶೆ ಯೆಹೋವ ದೇವರಿಗೆ, “ಹಾಗಾದರೆ ಈ ಸುದ್ದಿಯನ್ನು ಈಜಿಪ್ಟಿನವರು ಕೇಳುವರು. ನೀವು ಅವರಿಂದ ಈ ಜನರನ್ನು ನಿಮ್ಮ ಶಕ್ತಿಯಿಂದ ಬರಮಾಡಿದೆಯಲ್ಲಾ!</verse>
				<verse number="14">ಅವರು ಈ ದೇಶದ ನಿವಾಸಿಗಳಿಗೆ ಅದನ್ನು ಹೇಳುವರು. ನೀವು ಈ ಜನರ ಸಂಗಡ ಇದ್ದೀಯೆಂದೂ, ಯೆಹೋವ ದೇವರಾದ ನೀವೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀರಿ ಎಂದೂ ನೀವು ಹಗಲು ಹೊತ್ತಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀರಿ ಎಂದೂ ನೀವಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಎಂದೂ ಅವರು ಈಗಾಗಲೇ ಕೇಳಿದ್ದಾರೆ.</verse>
				<verse number="15">ಈಗ ನೀವು ಈ ಜನರನ್ನೆಲ್ಲಾ ಕೊಂದುಹಾಕಿದರೆ, ನಿಮ್ಮ ಪ್ರಖ್ಯಾತಿಯನ್ನು ಕೇಳಿದ ಜನಾಂಗಗಳು ನಿಮ್ಮ ವಿಷಯದಲ್ಲಿ,</verse>
				<verse number="16">ಯೆಹೋವ ದೇವರು ಈ ಜನರನ್ನು ಅವರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶಕ್ಕೆ ತರಲಾರದ ಕಾರಣ ಅವರನ್ನು ಮರುಭೂಮಿಯಲ್ಲಿ ಕೊಂದುಹಾಕಿದರು,” ಎಂದು ಹೇಳುವರು.</verse>
				<verse number="17">“ಈಗ ನೀವು ಹೇಳಿದ ಪ್ರಕಾರ ಯೆಹೋವ ದೇವರ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ.</verse>
				<verse number="18">ಯೆಹೋವ ದೇವರು ದೀರ್ಘಶಾಂತನು, ಮಹಾ ಪ್ರೀತಿಯುಳ್ಳವನು, ತಿರುಗಿಬೀಳುವುದನ್ನು ಮತ್ತು ಪಾಪವನ್ನು ಕ್ಷಮಿಸುವಾತನು, ಆದರೂ ಅಪರಾಧಿಯನ್ನು ಶಿಕ್ಷಿಸದೆ ಬಿಡದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆಗಳವರೆಗೂ ಶಿಕ್ಷಿಸುವಾತನೂ ಎಂದು ನೀವು ಹೇಳಿದ್ದೀರಲ್ಲಾ?</verse>
				<verse number="19">ನಿಮ್ಮ ಪ್ರೀತಿಯು ದೊಡ್ಡದಾಗಿರುವ ಪ್ರಕಾರವೂ ನೀವು ಈಜಿಪ್ಟಿನಿಂದ ಇಲ್ಲಿಯವರೆಗೆ ಈ ಜನರ ಪಾಪಗಳನ್ನು ಮನ್ನಿಸಿದ ಪ್ರಕಾರ ಈಗಲೂ ಈ ಜನರ ಪಾಪವನ್ನು ಮನ್ನಿಸಿರಿ,” ಎಂದು ಬೇಡಿಕೊಂಡನು.</verse>
				<verse number="20">ಆಗ ಯೆಹೋವ ದೇವರು, “ನಿನ್ನ ಮಾತಿನ ಪ್ರಕಾರ ಮನ್ನಿಸಿದ್ದೇನೆ.</verse>
				<verse number="21">ಆದರೆ ನನ್ನ ಜೀವದಾಣೆ, ಭೂಮಿಯೆಲ್ಲಾ ಯೆಹೋವ ದೇವರ ಮಹಿಮೆಯಿಂದ ತುಂಬಿರುವುದು.</verse>
				<verse number="22">ಏಕೆಂದರೆ ನನ್ನ ಮಹಿಮೆಯನ್ನೂ, ಈಜಿಪ್ಟ್ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ ನಾನು ಮಾಡಿದ ಸೂಚಕಕಾರ್ಯಗಳನ್ನೂ ನೋಡಿದ ಈ ಸಕಲ ಜನರು, ನನ್ನನ್ನು ಈಗ ಹತ್ತು ಸಾರಿ ಪರೀಕ್ಷಿಸಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ,</verse>
				<verse number="23">ನಾನು ಅವರ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವುದಿಲ್ಲ, ನನ್ನನ್ನು ಅಲಕ್ಷ್ಯ ಮಾಡಿದವರೆಲ್ಲರೂ ಅದನ್ನು ನೋಡುವುದಿಲ್ಲ.</verse>
				<verse number="24">ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ಬೇರೆ ಆತ್ಮವಿದ್ದುದರಿಂದಲೂ, ಅವನು ಹೃದಯಪೂರ್ವಕವಾಗಿ ನನ್ನನ್ನು ಹಿಂಬಾಲಿಸಿದ್ದುದರಿಂದಲೂ ಅವನು ಸಂಚರಿಸಿ ಬಂದ ಆ ದೇಶಕ್ಕೆ ಅವನನ್ನು ಸೇರಿಸುವೆನು. ಅವನ ಸಂತಾನವು ಅದನ್ನು ಸ್ವಾಧೀನಪಡಿಸಿಕೊಳ್ಳುವುದು.</verse>
				<verse number="25">ಅಮಾಲೇಕ್ಯರೂ, ಕಾನಾನ್ಯರೂ ತಗ್ಗಿನಲ್ಲಿ ವಾಸ ಮಾಡುತ್ತಿರುವುದರಿಂದ ನಾಳೆ ನೀವು ತಿರುಗಿಕೊಂಡು, ಕೆಂಪುಸಮುದ್ರದ ಮಾರ್ಗವಾಗಿ ಮರುಭೂಮಿಗೆ ಹೊರಡಿರಿ,” ಎಂದರು.</verse>
				<verse number="26">ಯೆಹೋವ ದೇವರು ಮೋಶೆ ಆರೋನನ ಸಂಗಡ ಮಾತನಾಡಿ,</verse>
				<verse number="27">“ಈ ದುಷ್ಟಜನರು ನನಗೆ ವಿರೋಧವಾಗಿ ಗೊಣಗುಟ್ಟುವುದನ್ನು ನಾನು ಎಷ್ಟು ಕಾಲ ಸಹಿಸಲಿ? ಇಸ್ರಾಯೇಲರು ನನಗೆ ವಿರೋಧವಾಗಿ ಗೊಣಗುಟ್ಟಿದ್ದನ್ನು ನಾನು ಕೇಳಿದ್ದೇನೆ.</verse>
				<verse number="28">ಆದ್ದರಿಂದ ನೀನು ಅವರಿಗೆ, ‘ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="29">ಈ ಮರುಭೂಮಿಯಲ್ಲಿ ನನಗೆ ವಿರೋಧವಾಗಿ ಗೊಣಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸತ್ತು ಹೋಗುವಿರಿ.</verse>
				<verse number="30">ಯೆಫುನ್ನೆಯ ಮಗ ಕಾಲೇಬನೂ, ನೂನನ ಮಗ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡುವುದಕ್ಕೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವೆಲ್ಲರೂ ಬಾರದೆ ಇರುವಿರಿ.</verse>
				<verse number="31">ಆದರೆ ಸೆರೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು, ನೀವು ಅಲಕ್ಷ್ಯಮಾಡಿದ ದೇಶವನ್ನು ಅವರು ಅನುಭವಿಸುವರು.</verse>
				<verse number="32">ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಮರುಭೂಮಿಯಲ್ಲಿ ಬೀಳುವುವು.</verse>
				<verse number="33">ಇದಲ್ಲದೆ ನಿಮ್ಮ ಮಕ್ಕಳು ನಲವತ್ತು ವರುಷ ಮರುಭೂಮಿಯಲ್ಲಿ ಅಲೆದಾಡಿ, ನಿಮ್ಮ ಹೆಣಗಳು ಮರುಭೂಮಿಯಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಅಪನಂಬಿಗಸ್ತಿಕೆಯನ್ನು ಅನುಭವಿಸುವಿರಿ.</verse>
				<verse number="34">ನೀವು ಆ ದೇಶವನ್ನು ಪರೀಕ್ಷಿಸಿದ ನಲವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಲವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು, ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ.</verse>
				<verse number="35">ಯೆಹೋವ ದೇವರಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಸೇರಿರುವ ಈ ದುಷ್ಟ ಸಭೆಗೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಮರುಭೂಮಿಯಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು,” ಎಂದರು.</verse>
				<verse number="36">ದೇಶವನ್ನು ಪರೀಕ್ಷಿಸುವುದಕ್ಕೆ ಮೋಶೆಯ ಅಪ್ಪಣೆಯ ಮೇರೆಗೆ ಹಿಂದಿರುಗಿ, ಆ ದೇಶದ ವಿಷಯವಾಗಿ ಕೆಟ್ಟ ಸುದ್ದಿಯನ್ನು ಎಬ್ಬಿಸಿ, ಸಮಸ್ತ ಸಭೆಯನ್ನು ಮೋಶೆಗೆ ವಿರೋಧವಾಗಿ ಗೊಣಗುಟ್ಟುವಂತೆ ಮಾಡಿದರು.</verse>
				<verse number="37">ಅಶುಭ ಸಮಾಚಾರವನ್ನು ತಂದ ಆ ಮನುಷ್ಯರು ಯೆಹೋವ ದೇವರ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.</verse>
				<verse number="38">ಆದರೆ ದೇಶವನ್ನು ಪರೀಕ್ಷಿಸುವುದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗ ಯೆಹೋಶುವನೂ, ಯೆಫುನ್ನೆಯ ಮಗ ಕಾಲೇಬನೂ ಉಳಿದರು.</verse>
				<verse number="39">ಮೋಶೆಯು ಇಸ್ರಾಯೇಲರಿಗೆ ಈ ಮಾತುಗಳನ್ನು ಹೇಳಿದಾಗ, ಜನರು ಬಹಳವಾಗಿ ದುಃಖಪಟ್ಟರು.</verse>
				<verse number="40">ಮರುದಿವಸ ಬೆಳಿಗ್ಗೆ ಅವರು ಎದ್ದು, ಬೆಟ್ಟದ ತುದಿಯ ಮೇಲಕ್ಕೆ ಏರಿ, “ಇಗೋ, ಯೆಹೋವ ದೇವರು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವುದಕ್ಕೆ ಇದ್ದೇವೆ. ನಾವು ಪಾಪಮಾಡಿದ್ದೇವೆ,” ಎಂದರು.</verse>
				<verse number="41">ಆಗ ಮೋಶೆಯು, “ನೀವು ಏಕೆ ಹೀಗೆ ಯೆಹೋವ ದೇವರ ಆಜ್ಞೆಯನ್ನು ಮೀರುತ್ತೀರಿ? ಅದು ಸಫಲವಾಗುವುದಿಲ್ಲ.</verse>
				<verse number="42">ಯೆಹೋವ ದೇವರು ನಿಮ್ಮ ಸಂಗಡ ಇಲ್ಲ ಅದಕ್ಕಾಗಿ ನಿಮ್ಮ ಶತ್ರುಗಳು ನಿಮ್ಮನ್ನು ಪರಾಜಯಗೊಳಿಸದಂತೆ ಏರಿ ಹೋಗಬೇಡಿರಿ.</verse>
				<verse number="43">ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿರುವುದರಿಂದ ನೀವು ಅವರ ಖಡ್ಗಕ್ಕೆ ತುತ್ತಾಗುವಿರಿ. ನೀವು ಯೆಹೋವ ದೇವರ ಕಡೆಯಿಂದ ತಿರುಗಿದ ಕಾರಣ, ಆತನು ನಿಮ್ಮ ಸಂಗಡ ಇರುವುದಿಲ್ಲ,” ಎಂದನು.</verse>
				<verse number="44">ಆದರೆ ಅವರು ಹಟಮಾಡಿ, ಬೆಟ್ಟದ ತುದಿಯ ಮೇಲೆ ಏರಿಹೋದರು. ಆದರೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವೂ ಮೋಶೆಯೂ ಪಾಳೆಯದಿಂದ ಹೊರಡಲಿಲ್ಲ.</verse>
				<verse number="45">ಆಗ ಆ ಬೆಟ್ಟದಲ್ಲಿ ವಾಸವಾಗಿದ್ದ ಅಮಾಲೇಕ್ಯರೂ, ಕಾನಾನ್ಯರೂ ಇಳಿದು, ಅವರನ್ನು ಹೊಡೆದು, ಹೊರ್ಮಾದವರೆಗೆ ಅಟ್ಟಿಬಿಟ್ಟರು.</verse>
			</chapter>
			<chapter number="15">
				<verse number="1">ಯೆಹೋವ ದೇವರು ಮೋಶೆಗೆ,</verse>
				<verse number="2">“ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ, ‘ನಾನು ನಿಮಗೆ ಕೊಡುವ ನಿಮ್ಮ ನಿವಾಸಗಳ ದೇಶಕ್ಕೆ ಬಂದಾಗ,</verse>
				<verse number="3">ಯೆಹೋವ ದೇವರಿಗೆ ಪಶುಗಳಿಂದಾದರೂ ಕುರಿಗಳಿಂದಾದರೂ ಸುವಾಸನೆಯನ್ನುಂಟುಮಾಡುವ ದಹನಬಲಿಯಾಗಲಿ, ಹರಕೆಯನ್ನು ಈಡೇರಿಸುವ ಬಲಿಯನ್ನಾಗಲಿ, ಉಚಿತವಾದ ಸಮರ್ಪಣೆಯಾಗಲಿ, ನಿಮ್ಮ ಪವಿತ್ರ ಹಬ್ಬಗಳಲ್ಲಿಯಾಗಲಿ ಯೆಹೋವ ದೇವರಿಗೆ ಬೆಂಕಿಯಿಂದ ಅರ್ಪಿಸಲಾಗಲಿ.</verse>
				<verse number="4">ಅದರೊಂದಿಗೆ ಯೆಹೋವ ದೇವರಿಗೆ ತನ್ನ ಬಲಿಯನ್ನು ಅರ್ಪಿಸುವಾಗ ಧಾನ್ಯ ಅರ್ಪಣೆಗಾಗಿ ಸುಮಾರು ಒಂದುವರೆ ಕಿಲೋಗ್ರಾಂ ಗೋಧಿ ಹಿಟ್ಟನ್ನು ಒಂದು ಲೀಟರ್ ಓಲಿವ್ ಎಣ್ಣೆಗೆ ಬೆರೆಸಲಾಗುತ್ತದೆ.</verse>
				<verse number="5">ಪಾನದ ಅರ್ಪಣೆಗಾಗಿ ದಹನಬಲಿಯ ಸಂಗಡ ಒಂದು ಕುರಿಗೋಸ್ಕರ ಒಂದು ಲೀಟರ್ ದ್ರಾಕ್ಷಾರಸವನ್ನು ಅರ್ಪಿಸಬೇಕು.</verse>
				<verse number="6">“ ‘ಟಗರನ್ನು ಅರ್ಪಿಸುವಾಗ ಅದರೊಂದಿಗೆ ಧಾನ್ಯ ಅರ್ಪಣೆಗಾಗಿ ಸುಮಾರು ಒಂದೂವರೆ ಲೀಟರ್ ಓಲಿವ್ ಎಣ್ಣೆ ಬೆರೆಸಿದ ಮೂರು ಕಿಲೋಗ್ರಾಂ ನಯವಾದ ಹಿಟ್ಟನ್ನು ನೀನು ಸಿದ್ಧಮಾಡಬೇಕು.</verse>
				<verse number="7">ಪಾನದ ಸಮರ್ಪಣೆಯಾಗಿ ಯೆಹೋವ ದೇವರಿಗೆ ಸುವಾಸನೆಗಾಗಿ ಒಂದು ಲೀಟರ್ ದ್ರಾಕ್ಷಾರಸವನ್ನು ಅರ್ಪಿಸಬೇಕು.</verse>
				<verse number="8">“ ‘ನೀನು ಯೆಹೋವ ದೇವರಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾಧಾನದ ಬಲಿಗಳಿಗಾಗಿ ಹೋರಿಯನ್ನು ನೀನು ಸಿದ್ಧಮಾಡುವಾಗ,</verse>
				<verse number="9">ನೀವು ಆ ಹೋರಿಯೊಂದಿಗೆ ಧಾನ್ಯ ಸಮರ್ಪಣೆಯಾಗಿ ಸುಮಾರು ಎರಡು ಲೀಟರ್ ಓಲಿವ್ ಎಣ್ಣೆ ಬೆರೆಸಿದ ಐದು ಕಿಲೋಗ್ರಾಂ ಗೋಧಿ ಹಿಟ್ಟನ್ನು ಅರ್ಪಿಸಬೇಕು.</verse>
				<verse number="10">ಇದಲ್ಲದೆ, ಪಾನದ್ರವ್ಯಕ್ಕಾಗಿ ಒಂದುವರೆ ಲೀಟರ್ ದ್ರಾಕ್ಷಾರಸವನ್ನು ಸಮರ್ಪಿಸಬೇಕು. ಇದು ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಯಾಗುವುದು.</verse>
				<verse number="11">ಹೀಗೆ ಒಂದು ಹೋರಿ, ಟಗರು, ಕುರಿಮರಿ, ಮೇಕೆ, ಇವುಗಳಲ್ಲಿ ಪ್ರತಿಯೊಂದು ಬಲಿಪ್ರಾಣಿಯ ಸಂಗಡ ಈ ಪ್ರಕಾರ ಮಾಡತಕ್ಕದ್ದು.</verse>
				<verse number="12">ನೀವು ಸಿದ್ಧಪಡಿಸಿದ ಬಲಿಗಳ ಲೆಕ್ಕದ ಪ್ರಕಾರ ನೀವು ಒಂದೊಂದನ್ನು ಅದರ ಲೆಕ್ಕದ ಪ್ರಕಾರ ಮಾಡತಕ್ಕದ್ದು.</verse>
				<verse number="13">“ ‘ಯೆಹೋವ ದೇವರಿಗೆ ಸುಗಂಧದ ದಹನಬಲಿಯನ್ನು ಅರ್ಪಿಸುವಾಗ ಸ್ಥಳೀಯ ಮೂಲದ ಇಸ್ರಾಯೇಲರೆಲ್ಲರೂ ಇವುಗಳನ್ನು ಈ ರೀತಿಯಾಗಿಯೇ ಮಾಡಬೇಕು.</verse>
				<verse number="14">ನಿಮ್ಮ ಸಂಗಡ ಪ್ರಯಾಣ ಮಾಡುವ ಪರದೇಶಿಯಾಗಲಿ ಇಲ್ಲವೆ ನಿಮ್ಮ ಮುಂದಿನ ಸಂತತಿಯವರ ಸಂಗಡ ಇರುವವನಾಗಲಿ, ಯೆಹೋವ ದೇವರಿಗೆ ಸುಗಂಧದ ದಹನಬಲಿಯನ್ನು ಸಮರ್ಪಿಸಿದಾಗ, ನೀವು ಹೇಗೆ ಮಾಡುತ್ತೀರೋ ಹಾಗೆಯೇ ಅವನು ಮಾಡಲಿ.</verse>
				<verse number="15">ನಿಮಗೂ ನಿಮ್ಮ ಕೂಡ ಪ್ರಯಾಣ ಮಾಡುವ ಪರಕೀಯನಿಗೂ ಒಂದೇ ಕಟ್ಟಳೆ ಇರಬೇಕು. ಯೆಹೋವ ದೇವರ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು.</verse>
				<verse number="16">ನಿಮಗೂ, ನಿಮ್ಮ ಕೂಡ ಪ್ರಯಾಣ ಮಾಡುವ ಪರಕೀಯನಿಗೂ ಒಂದೇ ಪ್ರಮಾಣವೂ ಒಂದೇ ನ್ಯಾಯವೂ ಇರಬೇಕು,’ ” ಎಂದರು.</verse>
				<verse number="17">ಯೆಹೋವ ದೇವರು ಮೋಶೆಗೆ,</verse>
				<verse number="18">“ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ: ‘ನಾನು ನಿಮ್ಮನ್ನು ಕರೆದುಕೊಂಡುಹೋಗುವ ದೇಶಕ್ಕೆ ನೀವು ಸೇರಿದನಂತರ,</verse>
				<verse number="19">ಆ ದೇಶದ ಆಹಾರವನ್ನು ತಿನ್ನುವಾಗ, ನೀವು ಅದರಲ್ಲಿ ಸ್ವಲ್ಪವನ್ನು ಯೆಹೋವ ದೇವರಿಗೆ ಕಾಣಿಕೆಯಾಗಿ ಅರ್ಪಿಸಬೇಕು.</verse>
				<verse number="20">ನೀವು ಕಣದಲ್ಲಿರುವ ಗೋಧಿಯಲ್ಲಿ ಪ್ರಥಮ ಫಲವನ್ನು ಕಾಣಿಕೆಯಾಗಿ ಅರ್ಪಿಸುವಂತೆ ಕಣಕದಿಂದ ಮಾಡುವ ನಿಮ್ಮ ಪ್ರಥಮ ಬೀಸಿದ ಹಿಟ್ಟಿನ ರೊಟ್ಟಿಯನ್ನು ಸಮರ್ಪಿಸಬೇಕು.</verse>
				<verse number="21">ನೀವು ಮತ್ತು ನಿಮ್ಮ ಸಂತತಿಯವರು ನಿಮ್ಮ ಕಣದಿಂದ ಮಾಡಿದ ಪ್ರಥಮ ರೊಟ್ಟಿಯನ್ನು ಯೆಹೋವ ದೇವರಿಗೆ ಸಮರ್ಪಿಸಬೇಕು.</verse>
				<verse number="22">“ ‘ನೀವು ತಪ್ಪಿ ಯೆಹೋವ ದೇವರು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ,</verse>
				<verse number="23">ನಿಮಗೆ ಆಜ್ಞೆಗಳನ್ನು ಕೊಟ್ಟ ದಿವಸ ಮೊದಲುಗೊಂಡು, ನಿಮ್ಮ ಸಂತತಿಗಳವರೆಗೂ ಯೆಹೋವ ದೇವರು ಮೋಶೆಯ ಕೈಯಿಂದ ನಿಮಗೆ ಆಜ್ಞಾಪಿಸಿದ ಪ್ರಕಾರ ನೀವು ಮಾಡದೆ ಹೋದರೆ,</verse>
				<verse number="24">ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ, ಸಭೆಯು ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಗಾಗಿ ಒಂದು ಎಳೆಯ ಹೋರಿಯನ್ನು ಕ್ರಮದ ಪ್ರಕಾರ ಅದರ ಧಾನ್ಯ ಸಮರ್ಪಣೆಯನ್ನೂ, ಪಾನದ ಸಮರ್ಪಣೆಯನ್ನೂ, ಪಾಪ ಪರಿಹಾರಕ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.</verse>
				<verse number="25">ಯಾಜಕನು ಇಸ್ರಾಯೇಲರ ಸಮಸ್ತ ಸಭೆಗೋಸ್ಕರ ಅವರಿಗೆ ಕ್ಷಮೆಯಾಗುವ ಹಾಗೆ ಪ್ರಾಯಶ್ಚಿತ್ತ ಮಾಡಬೇಕು. ಏಕೆಂದರೆ ಅದು ತಿಳಿಯದೆ ಮಾಡಲಾಗಿತ್ತು. ಆದರೂ ಅವರು ಯೆಹೋವ ದೇವರಿಗೆ ದಹನಬಲಿಯಾಗಿ ತಮ್ಮ ಸಮರ್ಪಣೆಯನ್ನೂ, ತಮ್ಮ ತಪ್ಪಿಗೋಸ್ಕರ ಪಾಪ ಪರಿಹಾರಕ ಬಲಿಯನ್ನೂ ಯೆಹೋವ ದೇವರ ಮುಂದೆ ತರಬೇಕು.</verse>
				<verse number="26">ಆಗ ಇಸ್ರಾಯೇಲರ ಸಮಸ್ತ ಸಮೂಹದವರಿಗೂ, ಅವರೊಳಗೆ ಪರಕೀಯನಾಗಿ ಪ್ರವಾಸಿಯಾಗಿರುವವನಿಗೂ ಅದು ಕ್ಷಮಾಪಣೆಯಾಗುವುದು. ಏಕೆಂದರೆ ಎಲ್ಲರೂ ತಿಳುವಳಿಕೆ ಇಲ್ಲದವರಾಗಿದ್ದರು.</verse>
				<verse number="27">“ ‘ಯಾವನಾದರೂ ಒಬ್ಬನು ತಿಳಿಯದೆ ಪಾಪ ಮಾಡುವುದಾದರೆ, ಪಾಪ ಪರಿಹಾರಕ ಬಲಿಗಾಗಿ ಒಂದು ವರ್ಷದ ಮೇಕೆಯನ್ನು ತರಬೇಕು.</verse>
				<verse number="28">ತಿಳಿಯದೆ ಪಾಪ ಮಾಡಿದವನಿಗೋಸ್ಕರ ಯಾಜಕನು ಯೆಹೋವ ದೇವರ ಮುಂದೆ ಪ್ರಾಯಶ್ಚಿತ್ತ ಮಾಡಬೇಕು. ಅದು ಪಾಪಕ್ಷಮಾಪಣೆಯಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು.</verse>
				<verse number="29">ಸ್ಥಳೀಯ ಮೂಲದ ಇಸ್ರಾಯೇಲರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ನಿಯಮ ಇರಬೇಕು.</verse>
				<verse number="30">“ ‘ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ, ಪರಕೀಯನಾಗಲಿ ಬೇಕೆಂದು ಪಾಪಮಾಡಿದರೆ, ಅವನು ಯೆಹೋವ ದೇವರನ್ನು ನಿಂದಿಸಿದ್ದಾನೆ. ಆ ಮನುಷ್ಯನನ್ನು ಸ್ವಜನರಿಂದ ತೆಗೆದುಹಾಕಬೇಕು.</verse>
				<verse number="31">ಅವನು ಯೆಹೋವ ದೇವರ ವಾಕ್ಯವನ್ನು ಅವಮಾನ ಮಾಡಿ, ಅವರ ಆಜ್ಞೆಗಳನ್ನು ಮೀರಿದ್ದರಿಂದ, ಆ ಮನುಷ್ಯನನ್ನು ನಿಶ್ಚಯವಾಗಿ ತೆಗೆದುಹಾಕಬೇಕು. ಅವನ ಅಕ್ರಮವು ಅವನ ಮೇಲೆ ಇರುವುದು,’ ” ಎಂದರು.</verse>
				<verse number="32">ಇಸ್ರಾಯೇಲರು ಮರುಭೂಮಿಯಲ್ಲಿದ್ದಾಗ, ಅವರು ಸಬ್ಬತ್ ದಿನದಲ್ಲಿ ಸೌದೆಯನ್ನು ಕೂಡಿಸುವ ಒಬ್ಬನನ್ನು ಕಂಡರು.</verse>
				<verse number="33">ಆಗ ಸೌದೆ ಕೂಡಿಸುವುದನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೆ ಮತ್ತು ಸಮಸ್ತ ಸಮುದಾಯದ ಬಳಿಗೆ ತಂದು,</verse>
				<verse number="34">ಅವನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ, ಅವನನ್ನು ಕಾವಲಲ್ಲಿ ಇಟ್ಟರು.</verse>
				<verse number="35">ಆಗ ಯೆಹೋವ ದೇವರು ಮೋಶೆಗೆ, “ಆ ಮನುಷ್ಯನು ಖಂಡಿತವಾಗಿಯೂ ಸಾಯಲೇಬೇಕು, ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು,” ಎಂದರು.</verse>
				<verse number="36">ಆಗ ಸಮೂಹದವರೆಲ್ಲಾ ಅವನನ್ನು ಪಾಳೆಯದ ಹೊರಗೆ ತೆಗೆದುಕೊಂಡುಹೋಗಿ, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಅವನನ್ನು ಕಲ್ಲೆಸೆದು ಕೊಂದರು.</verse>
				<verse number="37">ಯೆಹೋವ ದೇವರು ಮೋಶೆಗೆ,</verse>
				<verse number="38">“ನೀನು ಇಸ್ರಾಯೇಲರಿಗೆ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ಅವರು ತಮ್ಮ ತಲತಲಾಂತರಗಳಲ್ಲಿ ತಮ್ಮ ವಸ್ತ್ರಗಳ ಸೆರಗುಗಳ ಅಂಚಿನಲ್ಲಿ ಗೊಂಡೆಗಳನ್ನು ಮಾಡಿಕೊಳ್ಳಬೇಕು. ಸೆರಗಿನ ಗೊಂಡೆಗಳ ಮೇಲೆ ನೀಲಿ ದಾರವನ್ನು ಹಾಕಬೇಕು.</verse>
				<verse number="39">ಅದನ್ನು ನೀವು ಗೊಂಡೆಯಾಗಿ ಇಟ್ಟುಕೊಂಡು, ಅದನ್ನು ನೋಡುವಾಗ, ಯೆಹೋವ ದೇವರ ಸಕಲ ಆಜ್ಞೆಗಳನ್ನು ನೆನಸಿ ಅವುಗಳ ಪ್ರಕಾರಮಾಡಿ, ನಿಮ್ಮ ಹೃದಯ ಹಾಗೂ ಇಚ್ಛೆಗನುಸಾರ ನಿಮ್ಮ ಕಣ್ಣುಗಳು ಜಾರತ್ವ ಮಾಡುವಂತೆ ಹಿಂಬಾಲಿಸದೆ ಇರುವಿರಿ.</verse>
				<verse number="40">ನೀವು ನನ್ನ ಆಜ್ಞೆಗಳನ್ನೆಲ್ಲಾ ನೆನಸಿ, ಅವುಗಳ ಪ್ರಕಾರಮಾಡಿ, ನಿಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕು.</verse>
				<verse number="41">ನಾನು ನಿಮ್ಮ ದೇವರಾಗುವದಕ್ಕೆ ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”</verse>
			</chapter>
			<chapter number="16">
				<verse number="1">ಆಗ ಲೇವಿಯ ಮಗನಾದ ಕೊಹಾತನ ಮೊಮ್ಮಗ ಇಚ್ಹಾರನ ಮಗ ಕೋರಹನೂ ರೂಬೇನ್ ಗೋತ್ರದವರಾದ ಎಲೀಯಾಬನ ಮಕ್ಕಳಾದ ದಾತಾನನೂ ಅಬೀರಾಮನೂ ಮತ್ತು ಪೆಲೆತನ ಮಗನಾದ ಓನನೂ ಜನರನ್ನು ತೆಗೆದುಕೊಂಡು</verse>
				<verse number="2">ಇಸ್ರಾಯೇಲರೊಳಗಿಂದ ಸಭೆಯ ಪ್ರಧಾನರಾಗಿಯೂ ಸಭೆಯ ಪ್ರಸಿದ್ಧರಾಗಿಯೂ ಹೆಸರು ಹೊಂದಿದವರಾಗಿಯೂ ಇರುವ ಇನ್ನೂರ ಐವತ್ತು ಮಂದಿಯೊಂದಿಗೆ ಮೋಶೆಗೆ ಎದುರಾಗಿ ತಿರುಗಿಬಿದ್ದರು.</verse>
				<verse number="3">ಅವರು ಮೋಶೆಗೂ, ಆರೋನನಿಗೂ ವಿರೋಧವಾಗಿ ಕೂಡಿಕೊಂಡು, “ನೀವು ಹೆಚ್ಚು ಅಧಿಕಾರ ತೆಗೆದುಕೊಳ್ಳುತ್ತೀರಿ, ಏಕೆಂದರೆ ಈ ಸಮೂಹದಲ್ಲಿರುವ ಎಲ್ಲರೂ ಪರಿಶುದ್ಧರು. ಯೆಹೋವ ದೇವರು ಅವರ ಮಧ್ಯದಲ್ಲಿದ್ದಾರೆ. ಹೀಗಿರಲಾಗಿ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದು ಏಕೆ?” ಎಂದು ಅವರಿಗೆ ಕೇಳಿದರು.</verse>
				<verse number="4">ಮೋಶೆಯು ಇದನ್ನು ಕೇಳಿದಾಗ, ಬೋರಲು ಬಿದ್ದು,</verse>
				<verse number="5">ಕೋರಹನಿಗೂ, ಅವನ ಸಮಸ್ತ ಸಮೂಹಕ್ಕೂ, “ಯೆಹೋವ ದೇವರು ತಮ್ಮ ಹತ್ತಿರ ಬರಮಾಡಿಕೊಳ್ಳುವ ಹಾಗೆ ತನ್ನವರು ಯಾರಾರೆಂಬುದನ್ನು ಮತ್ತು ಪರಿಶುದ್ಧ ಯಾರು ಎಂಬುದನ್ನು ನಾಳೆ ತೋರಿಸುವರು. ಅವರು ಯಾರನ್ನು ಆಯ್ದುಕೊಳ್ಳುವರೋ, ಅವರನ್ನು ಹತ್ತಿರ ಬರಮಾಡಿಕೊಳ್ಳುವರು. ನೀವು ಇದನ್ನು ಮಾಡಿರಿ:</verse>
				<verse number="6">ಕೋರಹನೂ, ಅವನ ಸಮೂಹವೆಲ್ಲವೂ ಧೂಪ ಸುಡುವ ಪಾತ್ರೆಗಳನ್ನು ತೆಗೆದುಕೊಂಡು,</verse>
				<verse number="7">ನಾಳೆ ಅವುಗಳಲ್ಲಿ ಬೆಂಕಿಯನ್ನು ಹಾಕಿ, ಅವುಗಳ ಮೇಲೆ ಧೂಪವನ್ನು ಯೆಹೋವ ದೇವರ ಮುಂದೆ ಹಾಕಿರಿ. ಆಗ ಯೆಹೋವ ದೇವರು ಯಾವನನ್ನು ಆಯ್ದುಕೊಳ್ಳುವರೋ ಅವನೇ ಪರಿಶುದ್ಧನಾಗಿರುವನು. ಲೇವಿಯರೇ, ನೀವು ಬಹಳ ಮಿತಿಮೀರಿ ಹೋಗುತ್ತಿರುವಿರಿ,” ಎಂದನು.</verse>
				<verse number="8">ಮೋಶೆಯು ಕೋರಹನಿಗೆ, “ಲೇವಿಯ ಪುತ್ರರೇ, ಈಗ ಕೇಳಿರಿ.</verse>
				<verse number="9">ಯೆಹೋವ ದೇವರ ಗುಡಾರದ ಸೇವೆಯನ್ನು ಮಾಡುವುದಕ್ಕೂ, ಸಮೂಹದ ಮುಂದೆ ಇರುವ ಅವರ ಸೇವೆಯಲ್ಲಿ ನಿಲ್ಲುವುದಕ್ಕೂ ಇಸ್ರಾಯೇಲರ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲರೊಳಗಿಂದಲೇ ನಿಮ್ಮನ್ನು ಪ್ರತ್ಯೇಕಿಸಿದ್ದು, ನಿಮಗೆ ಅಲ್ಪವಾಗಿ ತೋರಿತೋ?</verse>
				<verse number="10">ದೇವರು ನಿನ್ನನ್ನೂ, ನಿನ್ನ ಸಂಗಡ ಲೇವಿಯ ಪುತ್ರರಾದ ನಿನ್ನ ಸಹೋದರರೆಲ್ಲರನ್ನೂ ತಮ್ಮ ಹತ್ತಿರ ಬರಮಾಡಿಕೊಂಡಿದ್ದಾರೆ. ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ?</verse>
				<verse number="11">ಈ ಕಾರಣದಿಂದ ನೀನೂ, ನಿನ್ನ ಸಮಸ್ತ ಗುಂಪು ಯೆಹೋವ ದೇವರಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ. ನೀವು ಆರೋನನಿಗೆ ವಿರೋಧವಾಗಿ ಗೊಣಗುಟ್ಟುವುದು ಯಾಕೆ?” ಎಂದು ಹೇಳಿದನು.</verse>
				<verse number="12">ಆಗ ಮೋಶೆ ಎಲೀಯಾಬನ ಪುತ್ರರಾದ ದಾತಾನನನ್ನೂ, ಅಬೀರಾಮನನ್ನೂ ಕರೆಯಕಳುಹಿಸಿದನು. ಆದರೆ ಅವರು, “ನಾವು ಬರುವುದಿಲ್ಲ.</verse>
				<verse number="13">ನೀನು ಮರುಭೂಮಿಯಲ್ಲಿ ನಮ್ಮನ್ನು ಸಾಯಿಸುವುದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಹೊರಕ್ಕೆ ಕರೆದುಕೊಂಡು ಬಂದದ್ದು ನಿನಗೆ ಸಾಕಾಗಲಿಲ್ಲವೋ? ನೀನು ಅರಸನಾಗಿ ನಮ್ಮನ್ನು ಆಳಬೇಕೋ?</verse>
				<verse number="14">ಅಷ್ಟುಮಾತ್ರವಲ್ಲದೆ, ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತೆಗೆದುಕೊಂಡು ಬರಲಿಲ್ಲ. ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ನಮಗೆ ಸ್ವಾಧೀನಕ್ಕೆ ಕೊಡಲಿಲ್ಲ. ಈ ಮನುಷ್ಯರ ಕಣ್ಣಿಗೆ ಮಣ್ಣು ಹಾಕಬೇಕೆಂದಿದ್ದೀಯೋ? ನಾವು ಬರುವುದಿಲ್ಲ!” ಎಂದರು.</verse>
				<verse number="15">ಆಗ ಮೋಶೆಯು ಬಹಳವಾಗಿ ಕೋಪಿಸಿಕೊಂಡು ಯೆಹೋವ ದೇವರಿಗೆ, “ಅವರ ಬಲಿಯನ್ನು ನೀವು ಗೌರವಿಸಬೇಡಿ, ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ. ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ,” ಎಂದು ಹೇಳಿದನು.</verse>
				<verse number="16">ಮೋಶೆಯು ಕೋರಹನಿಗೆ, “ನೀನೂ, ನಿನ್ನ ಸಮೂಹವೆಲ್ಲವೂ ಯೆಹೋವ ದೇವರ ಎದುರಿನಲ್ಲಿ ಇರಬೇಕು. ನೀನೂ, ಅವರೂ, ಆರೋನನೂ ನಾಳೆ ಬಂದು,</verse>
				<verse number="17">ಒಬ್ಬೊಬ್ಬನು ತನ್ನ ತನ್ನ ಧೂಪ ಪಾತ್ರೆಯನ್ನು ತೆಗೆದುಕೊಂಡು ಅವುಗಳಲ್ಲಿ ಧೂಪವನ್ನು ಹಾಕಿ, ಒಬ್ಬನಿಗೆ ಒಂದರ ಪ್ರಕಾರ ಇನ್ನೂರ ಐವತ್ತು ಧೂಪ ಪಾತ್ರೆಗಳಾದ ನಿಮ್ಮ ಧೂಪ ಪಾತ್ರೆಗಳನ್ನು ಯೆಹೋವ ದೇವರ ಎದುರಿಗೆ ತನ್ನಿರಿ. ನೀನೂ, ಆರೋನನೂ, ನಿಮ್ಮ ನಿಮ್ಮ ಧೂಪದ ಪಾತ್ರೆಗಳನ್ನು ತೆಗೆದುಕೊಂಡು ಬನ್ನಿರಿ,” ಎಂದನು.</verse>
				<verse number="18">ಆಗ ಅವರು ತಮ್ಮ ತಮ್ಮ ಧೂಪ ಪಾತ್ರೆಗಳನ್ನು ತೆಗೆದುಕೊಂಡು ಅವುಗಳ ಮೇಲೆ ಬೆಂಕಿಯನ್ನು ಹಾಕಿ, ಧೂಪವನ್ನು ಅದರ ಮೇಲೆ ಹಾಕಿ, ದೇವದರ್ಶನ ಗುಡಾರದ ಬಾಗಿಲಿನ ಮುಂದೆ ಮೋಶೆ ಆರೋನರ ಸಂಗಡ ನಿಂತರು.</verse>
				<verse number="19">ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಕೂಡಿಸಿದನು. ಆಗ ಯೆಹೋವ ದೇವರ ಮಹಿಮೆಯು ಸಮಸ್ತ ಸಮೂಹಕ್ಕೆ ತೋರಿಬಂತು.</verse>
				<verse number="20">ಯೆಹೋವ ದೇವರು ಮೋಶೆ ಆರೋನನ ಸಂಗಡ ಮಾತನಾಡಿ,</verse>
				<verse number="21">“ಈ ಜನರ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು.</verse>
				<verse number="22">ಆಗ ಅವರು ಬೋರಲು ಬಿದ್ದು, “ದೇವರೇ, ಎಲ್ಲಾ ಮಾನವರ ಆತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀವು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳುತ್ತೀರೋ?” ಎಂದರು.</verse>
				<verse number="23">ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,</verse>
				<verse number="24">“ನೀನು ಜನರ ಸಮೂಹಕ್ಕೆ, ‘ಕೋರಹ, ದಾತಾನ್, ಅಬೀರಾಮರ ನಿವಾಸದ ಸುತ್ತಲಿಂದ ದೂರವಿರಬೇಕು,’ ಎಂದು ಅವರಿಗೆ ಆಜ್ಞಾಪಿಸು,” ಎಂದರು.</verse>
				<verse number="25">ಮೋಶೆಯು ಎದ್ದು ದಾತಾನ್, ಅಬೀರಾಮರ ಬಳಿಗೆ ಹೋದನು. ಇಸ್ರಾಯೇಲರ ಹಿರಿಯರು ಅವನ ಹಿಂದೆ ಹೋದರು.</verse>
				<verse number="26">ಅವನು ಸಮೂಹದವರಿಗೆ, “ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿಹೋಗಿರಿ. ನೀವು ಅವರ ಎಲ್ಲಾ ಪಾಪಗಳ ದೆಸೆಯಿಂದ ನಾಶವಾಗದಂತೆ ಅವರಿಗಿರುವ ಯಾವುದನ್ನು ಮುಟ್ಟಬೇಡಿರಿ,” ಎಂದನು.</verse>
				<verse number="27">ಆಗ ಅವರು ಕೋರಹನ ದಾತಾನ್, ಅಬೀರಾಮರ ಡೇರೆಗಳ ಸುತ್ತಲಿಂದ ದೂರ ಹೋದರು. ದಾತಾನನೂ, ಅಬೀರಾಮನೂ ತಮ್ಮ ಹೆಂಡತಿಯರೂ, ಪುತ್ರರೂ, ಚಿಕ್ಕ ಮಕ್ಕಳೂ ತಮ್ಮ ಗುಡಾರಗಳ ಬಾಗಿಲುಗಳಲ್ಲಿ ನಿಂತುಕೊಂಡರು.</verse>
				<verse number="28">ಆಗ ಮೋಶೆಯು, “ಈ ಕಾರ್ಯಗಳನ್ನೆಲ್ಲಾ ಮಾಡುವುದಕ್ಕೆ ಯೆಹೋವ ದೇವರು ನನ್ನನ್ನು ಕಳುಹಿಸಿದ್ದಾರೆ, ಅವುಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲ ಎಂದು ನೀವು ಇದರಿಂದ ತಿಳಿದುಕೊಳ್ಳುವಿರಿ.</verse>
				<verse number="29">ಇವರು ಎಲ್ಲಾ ಮನುಷ್ಯರ ಹಾಗೆ ಸತ್ತರೆ, ಇಲ್ಲವೆ ಎಲ್ಲಾ ಮನುಷ್ಯರ ಶಿಕ್ಷೆ ಇವರಿಗೂ ಪ್ರಾಪ್ತವಾದರೆ ಯೆಹೋವ ದೇವರು ನನ್ನನ್ನು ಕಳುಹಿಸಲಿಲ್ಲ.</verse>
				<verse number="30">ಆದರೆ ಯೆಹೋವ ದೇವರು ಹೊಸದನ್ನು ಮಾಡಿ, ಭೂಮಿಯು ತನ್ನ ಬಾಯಿತೆರೆದು, ಇವರನ್ನೂ, ಇವರಿಗಿರುವ ಎಲ್ಲದನ್ನೂ ನುಂಗಿ, ಇವರು ತೀವ್ರವಾಗಿ ಪಾತಾಳಕ್ಕೆ ಇಳಿಯುವಂತೆ ಮಾಡಿ, ಈ ಮನುಷ್ಯರು ಯೆಹೋವ ದೇವರನ್ನು ರೇಗಿಸಿದ್ದಾರೆಂದು ನೀವು ತಿಳಿದುಕೊಳ್ಳುವಿರಿ,” ಎಂದನು.</verse>
				<verse number="31">ಅವನು ಹೇಳ ಬೇಕಾದವುಗಳನ್ನೆಲ್ಲಾ ಹೇಳಿ ಮುಗಿಸಿದಾಗಲೇ, ಅವರ ಕೆಳಗಿರುವ ನೆಲವು ಸೀಳಿ</verse>
				<verse number="32">ಭೂಮಿಯು ತನ್ನ ಬಾಯಿತೆರೆದು, ಅವರನ್ನೂ, ಅವರ ಮನೆಗಳನ್ನೂ, ಕೋರಹನಿಗೆ ಸಂಬಂಧಪಟ್ಟ ಸಕಲ ಜನರನ್ನೂ, ಅವರಿಗಿದ್ದದ್ದನ್ನೆಲ್ಲಾ ನುಂಗಿಬಿಟ್ಟಿತು.</verse>
				<verse number="33">ಅವರು ತಮಗೆ ಸಂಬಂಧಪಟ್ಟವುಗಳೆಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು. ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು.</verse>
				<verse number="34">ಆಗ ಅವರ ಸುತ್ತಲಿದ್ದ ಇಸ್ರಾಯೇಲರೆಲ್ಲರೂ ಓಡಿಹೋದರು, ಏಕೆಂದರೆ ಅವರು, “ಭೂಮಿಯು ನಮ್ಮನ್ನು ಸಹ ನುಂಗಿಬಿಟ್ಟೀತು,” ಎಂದು ಹೆದರಿದರು.</verse>
				<verse number="35">ಯೆಹೋವ ದೇವರ ಬಳಿಯಿಂದ ಬೆಂಕಿಯು ಹೊರಟು, ಧೂಪವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.</verse>
				<verse number="36">ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,</verse>
				<verse number="37">“ಯಾಜಕನಾದ ಆರೋನನ ಮಗ ಎಲಿಯಾಜರನಿಗೆ, ಧೂಪದ ಪಾತ್ರೆಗಳು ಪರಿಶುದ್ಧವಾಗಿರುವುದರಿಂದ ಸುಟ್ಟುಹೋದವರ ಮಧ್ಯದಿಂದ ಅವನು ಅವುಗಳನ್ನು ಎತ್ತಬೇಕು. ಆ ಬೆಂಕಿಯನ್ನು ದೂರ ಚೆಲ್ಲು.</verse>
				<verse number="38">ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿಪೀಠವನ್ನು ಮುಚ್ಚತಕ್ಕ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಏಕೆಂದರೆ ಅವುಗಳನ್ನು ಯೆಹೋವ ದೇವರ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲರಿಗೆ ಅವು ಗುರುತುಗಳಾಗಿರಬೇಕು,” ಎಂದರು.</verse>
				<verse number="39">ಆಗ ಯಾಜಕನಾದ ಎಲಿಯಾಜರನು ಯೆಹೋವ ದೇವರು ಮೋಶೆಯ ಮೂಲಕ ಹೇಳಿದ ಅಪ್ಪಣೆಯ ಪ್ರಕಾರ ಸುಟ್ಟು ಹೋದವರು ಅರ್ಪಿಸಿದ ಕಂಚಿನ ಧೂಪದ ಪಾತ್ರೆಗಳನ್ನು ತೆಗೆದುಕೊಂಡು, ಬಲಿಪೀಠವನ್ನು ಮುಚ್ಚುವುದಕ್ಕಾಗಿ ಅವುಗಳನ್ನು ಅಗಲವಾದ ತಗಡುಗಳನ್ನಾಗಿ ಮಾಡಿದನು.</verse>
				<verse number="40">ಆರೋನನ ಸಂತಾನವಲ್ಲದ ಪರಕೀಯನು ಯೆಹೋವ ದೇವರ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸಬಾರದು, ಅರ್ಪಿಸಿದರೆ ಕೋರಹ ಮತ್ತು ಅವನ ಸಮೂಹಕ್ಕೆ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವದಕ್ಕಾಗಿ ಅದು ಗುರುತಾಯಿತು.</verse>
				<verse number="41">ಆದರೆ ಮರುದಿನದಲ್ಲಿ ಇಸ್ರಾಯೇಲರ ಸಮೂಹವೆಲ್ಲಾ ಮೋಶೆಗೆ ವಿರೋಧವಾಗಿಯೂ ಆರೋನನಿಗೆ ವಿರೋಧವಾಗಿಯೂ ಗೊಣಗುಟ್ಟುತ್ತಾ, “ನೀವು ಯೆಹೋವ ದೇವರ ಜನರನ್ನು ಕೊಂದುಹಾಕಿದ್ದೀರಿ,” ಎಂದರು.</verse>
				<verse number="42">ಜನರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡಾಗ, ಅವರು ದೇವದರ್ಶನ ಗುಡಾರದ ಕಡೆಗೆ ನೋಡಲಾಗಿ, ಮೇಘವು ಅದನ್ನು ಮುಚ್ಚಿಕೊಂಡು, ಯೆಹೋವ ದೇವರ ಮಹಿಮೆಯು ಕಾಣಬಂತು.</verse>
				<verse number="43">ಮೋಶೆಯೂ ಆರೋನನೂ ದೇವದರ್ಶನ ಗುಡಾರದ ಮುಂದೆ ಬಂದರು.</verse>
				<verse number="44">ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,</verse>
				<verse number="45">“ನೀನು ಈ ಜನರ ಮಧ್ಯದಿಂದ ಎದ್ದು ಬಾ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು. ಆಗ ಅವರಿಬ್ಬರು ಬೋರಲು ಬಿದ್ದರು.</verse>
				<verse number="46">ಮೋಶೆಯು ಆರೋನನಿಗೆ, “ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು, ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು, ಧೂಪ ಹಾಕಿ, ಶೀಘ್ರವಾಗಿ ಜನರೊಳಗೆ ಹೋಗಿ, ಅವರಿಗೋಸ್ಕರ ಪ್ರಾಯಶ್ಚಿತ್ತವನ್ನು ಮಾಡು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಕೋಪವು ಹೊರಟು, ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು,” ಎಂದನು.</verse>
				<verse number="47">ಆರೋನನು, ಮೋಶೆಯು ಹೇಳಿದ ಹಾಗೆ ಅದನ್ನು ತೆಗೆದುಕೊಂಡು, ಜನಸಮೂಹದ ಮಧ್ಯಕ್ಕೆ ಓಡಿಬಂದನು. ಆಗ ವ್ಯಾಧಿಯು ಜನರೊಳಗೆ ಪ್ರಾರಂಭವಾಗಿತ್ತು. ಅವನು ಧೂಪವನ್ನು ಇಟ್ಟು, ಜನರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.</verse>
				<verse number="48">ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡದ್ದರಿಂದ ವ್ಯಾಧಿಯು ಶಮನವಾಯಿತು.</verse>
				<verse number="49">ಕೋರಹನ ನಿಮಿತ್ತ ಸತ್ತು ಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕು ಸಾವಿರ ಏಳು ನೂರು ಮಂದಿಯಾಗಿದ್ದರು.</verse>
				<verse number="50">ಆ ವ್ಯಾಧಿಯು ನಿಂತು ಹೋದಾಗ ಆರೋನನು ದೇವದರ್ಶನ ಗುಡಾರದ ಬಾಗಿಲಿನ ಬಳಿಯಲ್ಲಿದ್ದ ಮೋಶೆಯ ಬಳಿಗೆ ಹಿಂದಿರುಗಿ ಬಂದನು.</verse>
			</chapter>
			<chapter number="17">
				<verse number="1">ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,</verse>
				<verse number="2">“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಂದ ಅವರ ಪಿತೃಗಳ ಗೋತ್ರಗಳ ಪ್ರಕಾರ, ಅವರ ಪ್ರಧಾನರೆಲ್ಲರ ಪಿತೃಗಳ ಮನೆಯ ಪ್ರಕಾರ ಕೋಲುಗಳನ್ನು ತೆಗೆದುಕೊಂಡು, ಒಬ್ಬೊಬ್ಬನ ಹೆಸರನ್ನು ಅವನವನ ಕೋಲಿನ ಮೇಲೆ ನೀನು ಬರೆ.</verse>
				<verse number="3">ಆರೋನನ ಹೆಸರನ್ನು ಲೇವಿಯ ಕೋಲಿನ ಮೇಲೆ ಬರೆಯಬೇಕು. ಏಕೆಂದರೆ ಅವರ ಪಿತೃಗಳ ಗೋತ್ರದ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು.</verse>
				<verse number="4">ಅವುಗಳನ್ನು ದೇವದರ್ಶನ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಒಡಂಬಡಿಕೆಯ ಮಂಜೂಷದ ಮುಂದೆ ಇಡಬೇಕು.</verse>
				<verse number="5">ನಾನು ಯಾವನನ್ನು ಆಯ್ದುಕೊಳ್ಳುತ್ತೇನೋ, ಆ ಮನುಷ್ಯನ ಕೋಲು ಚಿಗುರುವುದು. ಹೀಗೆ ಇಸ್ರಾಯೇಲರು ನಿಮಗೆ ವಿರೋಧವಾಗಿ ಗೊಣಗುಟ್ಟುವುದನ್ನು ನಾನು ನಿಲ್ಲಿಸಿಬಿಡುವೆನು,” ಎಂದರು.</verse>
				<verse number="6">ಹಾಗೆಯೇ ಮೋಶೆಯು ಇಸ್ರಾಯೇಲರ ಸಂಗಡ ಮಾತನಾಡಿದನು. ಅವರ ಪ್ರಧಾನರೆಲ್ಲರೂ ತಮ್ಮ ಪಿತೃಗಳ ಗೋತ್ರಗಳ ಪ್ರಕಾರ ಒಬ್ಬೊಬ್ಬ ಪ್ರಧಾನನಿಗೋಸ್ಕರ ಒಂದೊಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಕೊಟ್ಟರು. ಆರೋನನ ಕೋಲು ಸಹ ಅವರ ಕೋಲುಗಳ ಮಧ್ಯದಲ್ಲಿ ಇತ್ತು.</verse>
				<verse number="7">ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರದ ಒಳಗೆ ಯೆಹೋವ ದೇವರ ಸಮ್ಮುಖದಲ್ಲಿ ಇಟ್ಟನು.</verse>
				<verse number="8">ಮರುದಿವಸದಲ್ಲಿ, ಮೋಶೆಯು ಸಾಕ್ಷಿ ಗುಡಾರದೊಳಗೆ ಪ್ರವೇಶಿಸುವಾಗ, ಲೇವಿಯ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ, ಮೊಗ್ಗು ಬಿಟ್ಟು, ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.</verse>
				<verse number="9">ಆಗ ಮೋಶೆಯು ಕೋಲುಗಳನ್ನು ಯೆಹೋವ ದೇವರ ಸನ್ನಿಧಿಯಿಂದ ಎಲ್ಲಾ ಇಸ್ರಾಯೇಲರಿಗೆ ತೋರಿಸುವುದಕ್ಕಾಗಿ ಹೊರಗೆ ತಂದನು. ಆಗ ಅವರು ನೋಡಿ ತಮ್ಮ ತಮ್ಮ ಕೋಲುಗಳನ್ನು ತೆಗೆದುಕೊಂಡರು.</verse>
				<verse number="10">ಯೆಹೋವ ದೇವರು ಮೋಶೆಗೆ, “ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಇಟ್ಟುಕೊಳ್ಳುವುದಕ್ಕೆ ಒಡಂಬಡಿಕೆಯ ಮಂಜೂಷದ ಮುಂದೆ ತಿರುಗಿ ಇಡು. ಗೊಣಗುಟ್ಟುವುದನ್ನು ನೀನು ಸಂಪೂರ್ಣವಾಗಿ ತೆಗೆದುಬಿಡಬೇಕು,” ಎಂದರು.</verse>
				<verse number="11">ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರವೇ ಮೋಶೆ ಮಾಡಿದನು.</verse>
				<verse number="12">ಆಗ ಇಸ್ರಾಯೇಲರು ಮೋಶೆಯ ಸಂಗಡ ಮಾತನಾಡಿ, “ನಾವೆಲ್ಲರೂ ಸಾಯುತ್ತೇವೆ, ನಾಶವಾಗುತ್ತೇವೆ. ನಾವೆಲ್ಲರೂ ನಾಶವಾಗುತ್ತೇವೆ.</verse>
				<verse number="13">ಯೆಹೋವ ದೇವರ ಗುಡಾರದ ಸಮೀಪಕ್ಕೆ ಬರುವವರೆಲ್ಲರೂ ಸಾಯುವರು. ಹಾಗೆಯೇ ನಾವೆಲ್ಲರೂ ಸಾಯಬೇಕೋ?” ಎಂದರು.</verse>
			</chapter>
			<chapter number="18">
				<verse number="1">ಯೆಹೋವ ದೇವರು ಆರೋನನಿಗೆ, “ನೀನೂ, ನಿನ್ನ ಪುತ್ರರೂ, ನಿನ್ನ ಪಿತೃಗಳ ಮನೆಯವರೂ ಪರಿಶುದ್ಧ ಸ್ಥಳಕ್ಕೆ ವಿರೋಧವಾಗಿ ನಡೆಯುವ ಕಾರ್ಯಗಳ ಜವಾಬ್ದಾರಿ ವಹಿಸಬೇಕು. ಯಾಜಕತ್ವಕ್ಕೆ ವಿರೋಧವಾಗಿ ನಡೆಯುವ ಅಕ್ರಮಗಳಿಗೆ ನೀನು ಮತ್ತು ನಿನ್ನ ಪುತ್ರರು ಮಾತ್ರ ಹೊಣೆಯಾಗಿರುತ್ತೀರಿ.</verse>
				<verse number="2">ನಿನ್ನ ಗೋತ್ರದ ಮೂಲಪುರುಷನಾದ ಲೇವಿ ವಂಶದವರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಏಕೆಂದರೆ ಅವರು ನಿನ್ನ ಕೂಡ ಇದ್ದು, ನಿನಗೆ ಸೇವೆಮಾಡಬೇಕು. ಆದರೆ ನೀನು ಮತ್ತು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷಿ ಗುಡಾರದ ಮುಂದೆ ಸೇವೆಮಾಡಬೇಕು.</verse>
				<verse number="3">ಅವರು ನಿನಗೂ ದೇವದರ್ಶನದ ಗುಡಾರದ ಕಾರ್ಯಗಳಿಗೂ ಜವಾಬ್ದಾರರಾಗಿರುವರು. ಆದರೆ ಪರಿಶುದ್ಧಸ್ಥಳದ ಸಲಕರಣೆಗಳ ಹತ್ತಿರವಾಗಲಿ, ಬಲಿಪೀಠದ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಮಾತ್ರವಲ್ಲ ನೀವೂ ಸಹ ಸಾಯುವಿರಿ.</verse>
				<verse number="4">ಆದರೆ ಅವರು ನಿನ್ನ ಸಹಾಯಕರಾಗಿದ್ದು, ದೇವದರ್ಶನದ ಗುಡಾರದ ಎಲ್ಲಾ ಕಾರ್ಯಗಳಿಗೂ ಅದನ್ನು ಕಾಪಾಡುವುದಕ್ಕೂ ಜವಾಬ್ದಾರರಾಗಿರುವರು. ಬೇರೆ ಕುಲದವರು ನಿಮ್ಮ ಸಮೀಪಕ್ಕೆ ಬರಬಾರದು.</verse>
				<verse number="5">“ಇಸ್ರಾಯೇಲರ ಮೇಲೆ ಇನ್ನು ಮುಂದೆ ಎಂದಿಗೂ ನನ್ನ ಕೋಪಾಗ್ನಿಯು ಬಾರದ ಹಾಗೆ ಪರಿಶುದ್ಧ ಸ್ಥಳವನ್ನು ಮತ್ತು ಬಲಿಪೀಠವನ್ನು ನೀವೇ ನೋಡಿಕೊಳ್ಳಬೇಕು.</verse>
				<verse number="6">ನಾನು ನಿಮ್ಮ ಸಹೋದರರಾದ ಲೇವಿಯರನ್ನು ಇಸ್ರಾಯೇಲರೊಳಗಿಂದ ತೆಗೆದುಕೊಂಡಿದ್ದೇನೆ. ದೇವದರ್ಶನ ಗುಡಾರದ ಸೇವೆಯನ್ನು ಮಾಡುವುದಕ್ಕೆ ಅವರು ಯೆಹೋವ ದೇವರಿಗಾಗಿ ನಿಮಗೆ ಕಾಣಿಕೆಯಾಗಿ ಸಮರ್ಪಿತರಾಗಿದ್ದಾರೆ.</verse>
				<verse number="7">ಆದ್ದರಿಂದ ನೀನು ನಿನ್ನ ಪುತ್ರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ತೆರೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವ ಸೇವೆಯನ್ನು ನಿಮಗೆ ದಾನವಾಗಿ ಕೊಟ್ಟಿದ್ದೇನೆ. ಪರಕೀಯನು ಸಮೀಪಕ್ಕೆ ಬಂದರೆ ಮರಣಶಿಕ್ಷೆಯಾಗಬೇಕು,” ಎಂದರು.</verse>
				<verse number="8">ಯೆಹೋವ ದೇವರು ಮಾತನಾಡಿ ಆರೋನನಿಗೆ, “ನನಗೆ ಕೊಡುವ ಎಲ್ಲಾ ಕಾಣಿಕೆಗಳ ಮೇಲೆ ನಿನ್ನನ್ನು ನೇಮಿಸಿದ್ದೇನೆ. ಇಸ್ರಾಯೇಲರು ನನಗೆ ಸಮರ್ಪಿಸುವ ಎಲ್ಲಾ ಪರಿಶುದ್ಧವಾದ ಕಾಣಿಕೆಗಳನ್ನೆಲ್ಲಾ ನಿನಗೂ ನಿನ್ನ ಮಕ್ಕಳಿಗೂ ಶಾಶ್ವತ ಪಾಲನ್ನು ನೀಡುತ್ತೇನೆ,” ಎಂದರು.</verse>
				<verse number="9">ದಹನಬಲಿಗೆ ಒಳಗಾಗದ ಮಹಾಪರಿಶುದ್ಧವಾದ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು ಯಾವುವೆಂದರೆ ಇಸ್ರಾಯೇಲರು ನನಗೆ ಸಮರ್ಪಿಸುವ ಧಾನ್ಯ, ದೋಷಪರಿಹಾರಕ ಬಲಿಗಳು ಮತ್ತು ಪ್ರಾಯಶ್ಚಿತ್ತ ಬಲಿಗಳು, ಇವುಗಳಲ್ಲಿ ದಹನವಾಗದೆ ಉಳಿದವುಗಳು ಮಹಾಪರಿಶುದ್ಧವಾದದರಿಂದ ನಿನಗೂ ನಿನ್ನ ಪುತ್ರರಿಗೂ ಸೇರಬೇಕು.</verse>
				<verse number="10">ಮಹಾಪರಿಶುದ್ಧ ಸ್ಥಳದಲ್ಲಿ ನೀನು ಅದನ್ನು ತಿನ್ನಬೇಕು. ಪುರುಷರು ಅದನ್ನು ತಿನ್ನಬಹುದು. ಅದು ನಿನಗೆ ಪರಿಶುದ್ಧವಾಗಿರುವುದೆಂದು ಪರಿಗಣಿಸಬೇಕು.</verse>
				<verse number="11">“ಅವರು ಕೊಟ್ಟ ಅರ್ಪಣೆಯೂ ಇಸ್ರಾಯೇಲರು ನೈವೇದ್ಯವಾಗಿ ನಿವಾಳಿಸುವ ಎಲ್ಲಾ ಸಮರ್ಪಣೆಗಳೂ ನಿನ್ನದಾಗಿರುವುವು. ಅವುಗಳನ್ನು ನಾನು ನಿನಗೂ, ನಿನ್ನ ಪುತ್ರಪುತ್ರಿಯರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನೂ ಅದನ್ನು ತಿನ್ನಬಹುದು.</verse>
				<verse number="12">“ಜನರು ಯೆಹೋವ ದೇವರಿಗೆ ಸಮರ್ಪಿಸುವ ಪ್ರಥಮ ಫಲಗಳನ್ನು ಅಂದರೆ ಎಲ್ಲಾ ಉತ್ತಮವಾದ ಎಣ್ಣೆಯೂ ಉತ್ತಮವಾದ ಹೊಸ ದ್ರಾಕ್ಷಾರಸ, ಧಾನ್ಯವೂ ನಿನಗೆ ಕೊಟ್ಟಿದ್ದೇನೆ.</verse>
				<verse number="13">ಅವರು ಯೆಹೋವ ದೇವರಿಗೆ ತರುವ ಅವರ ದೇಶದಲ್ಲಿರುವ ಎಲ್ಲವುಗಳ ಪ್ರಥಮ ಫಲಗಳು ನಿನ್ನವುಗಳಾಗಿರುವುವು. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನೂ ಅದನ್ನು ತಿನ್ನಬಹುದು.</verse>
				<verse number="14">“ಇಸ್ರಾಯೇಲರು ಯೆಹೋವ ದೇವರಿಗೆ ಹರಕೆಮಾಡಿ ಸಮರ್ಪಿಸಿದ ಪ್ರತಿಯೊಂದೂ ನಿನ್ನದಾಗಿದೆ.</verse>
				<verse number="15">ಮನುಷ್ಯರಲ್ಲಾಗಲಿ, ಪಶುಗಳಲ್ಲಾಗಲಿ ಯೆಹೋವ ದೇವರಿಗೆ ಸಮರ್ಪಿಸುವ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು. ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಅಪವಿತ್ರವಾದ ಗಂಡು ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು.</verse>
				<verse number="16">ಅವು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗ, ದೇವರ ಸೇವೆಗೆ ನಿಗದಿಯಾದ ಇಪ್ಪತ್ತು ಗೇರಾ ತೂಕದ ನಾಣ್ಯದ ಮೇರೆಗೆ ಐದು ಶೆಕೆಲ್ ನಾಣ್ಯವನ್ನು ತೆಗೆದುಕೊಂಡು ಅವುಗಳನ್ನು ವಿಮೋಚಿಸಿಕೊಳ್ಳಬೇಕು.</verse>
				<verse number="17">“ಆದರೆ ಆಕಳಿನ ಚೊಚ್ಚಲನ್ನಾದರೂ ಕುರಿಯ ಚೊಚ್ಚಲನ್ನಾದರೂ ಮೇಕೆಯ ಚೊಚ್ಚಲನ್ನಾದರೂ ನೀನು ಬಿಟ್ಟುಬಿಡಬಾರದು. ಅವು ಪರಿಶುದ್ಧವಾಗಿವೆ, ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸಬೇಕು, ಅವುಗಳ ಕೊಬ್ಬನ್ನು ಯೆಹೋವ ದೇವರಿಗೆ ಸುವಾಸನೆಯ ದಹನಬಲಿ ಮಾಡಬೇಕು.</verse>
				<verse number="18">ನೈವೇದ್ಯವಾಗಿ ನಿವಾಳಿಸುವ ಎದೆಯೂ ಬಲಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನದಾಗಿರಬೇಕು.</verse>
				<verse number="19">ಇಸ್ರಾಯೇಲರು ಯೆಹೋವ ದೇವರಿಗೆ ನೈವೇದ್ಯ ಮಾಡುವ ಪರಿಶುದ್ಧವಾದ ಬಲಿಗಳನ್ನೆಲ್ಲಾ ನಿನಗೂ ನಿನ್ನ ಪುತ್ರಪುತ್ರಿಯರಿಗೂ ಕ್ರಮ ಪ್ರಕಾರವಾದ ಭಾಗವಾಗಿ ಕೊಟ್ಟಿದ್ದೇನೆ. ಇದು ಯೆಹೋವ ದೇವರ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು,” ಎಂದರು.</verse>
				<verse number="20">ಯೆಹೋವ ದೇವರು ಆರೋನನಿಗೆ, “ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು, ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು. ನಾನೇ ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಪಾಲೂ ನಿನ್ನ ಸ್ವಾಸ್ತ್ಯವೂ ಆಗಿದ್ದೇನೆ.</verse>
				<verse number="21">“ಅವರು ದೇವದರ್ಶನ ಗುಡಾರದ ಸೇವೆಯನ್ನೂ ಮಾಡುವುದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾಯೇಲರಲ್ಲಿ ಹತ್ತನೆಯ ಭಾಗವನ್ನು ಸೊತ್ತಾಗಿ ಕೊಟ್ಟಿದ್ದೇನೆ.</verse>
				<verse number="22">ಇನ್ನು ಮೇಲೆ ಇಸ್ರಾಯೇಲರು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ದೇವದರ್ಶನದ ಗುಡಾರದ ಸಮೀಪಕ್ಕೆ ಬರಬಾರದು.</verse>
				<verse number="23">ಆದರೆ ಲೇವಿಯರೇ ದೇವದರ್ಶನ ಗುಡಾರದ ಸೇವೆಯನ್ನು ಮಾಡಬೇಕು. ಅವರು ಅಲ್ಲಿ ಅಕ್ರಮವಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊತ್ತಿರಬೇಕು. ಇದು ನಿಮ್ಮ ಸಂತತಿಗಳಿಗೆ ಶಾಶ್ವತ ಕಟ್ಟಳೆಯಾಗಿದೆ, ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಾಸ್ತ್ಯ ಇರಬಾರದು.</verse>
				<verse number="24">ಇಸ್ರಾಯೇಲರು ಯೆಹೋವ ದೇವರಿಗೆ ಬಲಿಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ. ಆದಕಾರಣ, ‘ಇಸ್ರಾಯೇಲರ ಮಧ್ಯದಲ್ಲಿ ಅವರಿಗೆ ಸೊತ್ತು ಇರಬಾರದು ಎಂದು ನಾನು ಅವರಿಗೆ ಹೇಳಿದ್ದೇನೆ,’ ” ಎಂದರು.</verse>
				<verse number="25">ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,</verse>
				<verse number="26">“ನೀನು ಲೇವಿಯರಿಗೆ ಹೇಳಬೇಕಾದದ್ದೇನೆಂದರೆ, ‘ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ಇಸ್ರಾಯೇಲರಿಂದ ನೀವು ತೆಗೆದುಕೊಳ್ಳುವಾಗ ಅದರಲ್ಲಿ ಹತ್ತನೆಯದರಿಂದ ಒಂದು ಪಾಲನ್ನು ಪ್ರತ್ಯೇಕಿಸಿ ಯೆಹೋವ ದೇವರಿಗೆ ಸಮರ್ಪಿಸಬೇಕು.</verse>
				<verse number="27">ಈ ನಿಮ್ಮ ಸಮರ್ಪಣೆಯನ್ನು ಕಣದ ಧಾನ್ಯದ ಹಾಗೆಯೂ ದ್ರಾಕ್ಷಿತೊಟ್ಟಿಯ ರಸದಂತೆಯೂ ಪರಿಗಣಿಸಲಾಗುವುದು.</verse>
				<verse number="28">ಈ ಪ್ರಕಾರ ನೀವು ಸಹ ಇಸ್ರಾಯೇಲರ ಕಡೆಯಿಂದ ತೆಗೆದುಕೊಳ್ಳುವ ನಿಮ್ಮ ಎಲ್ಲಾ ಹತ್ತನೆಯ ಒಂದು ಭಾಗವನ್ನು ಯೆಹೋವ ದೇವರಿಗೆ ಕಾಣಿಕೆಯಾಗಿ ಅರ್ಪಿಸಬೇಕು, ನೀವು ಅದರಿಂದ ಯೆಹೋವ ದೇವರ ಯಾಜಕನಾದ ಆರೋನನಿಗೆ ಕೊಡಬೇಕು.</verse>
				<verse number="29">ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಅದರ ಒಂದೊಂದರ ಉತ್ತಮವಾದದ್ದನ್ನು ಅದರೊಳಗಿನ ಪರಿಶುದ್ಧವಾದ ಭಾಗವನ್ನೇ ಯೆಹೋವ ದೇವರಿಗೆ ಸಮರ್ಪಣೆಯಾಗಿ ಅರ್ಪಿಸಬೇಕು.’</verse>
				<verse number="30">“ನೀನು ಲೇವಿಯರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಅದರಲ್ಲಿ ಉತ್ತಮವಾದದ್ದನ್ನು ಸಮರ್ಪಿಸಿದ ನಂತರ ಉಳಿದವುಗಳನ್ನು ಕಣದಲ್ಲಿನ ದವಸದಂತೆಯೂ ದ್ರಾಕ್ಷಿತೊಟ್ಟಿಯ ರಸದಂತೆಯೂ ಪರಿಗಣಿಸಲಾಗುತ್ತದೆ.</verse>
				<verse number="31">ನೀವೂ ನಿಮ್ಮ ಮನೆಯವರೂ ಅದನ್ನು ಸಕಲ ಸ್ಥಳಗಳಲ್ಲಿ ತಿನ್ನಬಹುದು. ಏಕೆಂದರೆ ದೇವದರ್ಶನದ ಗುಡಾರದಲ್ಲಿ ನೀವು ಮಾಡುವ ಸೇವೆಗೋಸ್ಕರ ಅದು ನಿಮಗೆ ಪ್ರತಿಫಲವಾಗಿದೆ.</verse>
				<verse number="32">ಆದಕಾರಣ ನೀವು ಅದರಲ್ಲಿ ಉತ್ತಮವಾದದ್ದನ್ನು ಅರ್ಪಿಸಿದಾಗ, ಅದರ ದೆಸೆಯಿಂದ ಯಾವ ದೋಷಕ್ಕೂ ನೀವು ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ನೀವು ಸಾಯುವುದಿಲ್ಲ,’ ” ಎಂದರು.</verse>
			</chapter>
			<chapter number="19">
				<verse number="1">ಯೆಹೋವ ದೇವರು ಮೋಶೆ ಹಾಗೂ ಆರೋನನ ಸಂಗಡ ಮಾತನಾಡಿ,</verse>
				<verse number="2">“ಯೆಹೋವ ದೇವರಾದ ನಾನು ಆಜ್ಞಾಪಿಸಿದ ನಿಯಮದ ಕಟ್ಟಳೆ ಏನೆಂದರೆ, ಎಂದೂ ನೊಗವನ್ನು ಹೊರದಂಥ, ಮಚ್ಚೆ ಇಲ್ಲದಂಥ ಮತ್ತು ಕಳಂಕವಿಲ್ಲದ ಕೆಂದಾಕಳನ್ನು ನಿಮಗೆ ತಂದು ಕೊಡುವಂತೆ ಇಸ್ರಾಯೇಲರಿಗೆ ಹೇಳು.</verse>
				<verse number="3">ನೀವು ಅದನ್ನು ಯಾಜಕನಾದ ಎಲಿಯಾಜರನಿಗೆ ಕೊಡಬೇಕು. ಅವನು ಅದನ್ನು ಪಾಳೆಯದ ಹೊರಗೆ ತೆಗೆದುಕೊಂಡುಹೋಗಿ, ತನ್ನ ಮುಂದೆ ವಧೆಮಾಡಿಸಬೇಕು.</verse>
				<verse number="4">ಯಾಜಕನಾದ ಎಲಿಯಾಜರನು ತನ್ನ ಬೆರಳಿನಿಂದ ಅದರ ರಕ್ತವನ್ನು ತೆಗೆದುಕೊಂಡು, ಅದನ್ನು ಏಳು ಸಾರಿ ದೇವದರ್ಶನ ಗುಡಾರದ ಮುಂಭಾಗಕ್ಕೆ ನೇರವಾಗಿ ಚಿಮುಕಿಸಬೇಕು.</verse>
				<verse number="5">ಹಸುವನ್ನು ಅವನ ಎದುರಿನಲ್ಲಿಯೇ ಸುಡಿಸಬೇಕು. ಅದರ ತೊಗಲನ್ನೂ ಮಾಂಸವನ್ನೂ ರಕ್ತವನ್ನೂ ಮತ್ತು ಅದರ ಸಗಣಿಯ ಕೂಡ ಸುಡಬೇಕು.</verse>
				<verse number="6">ಯಾಜಕನು ದೇವದಾರು ಕಟ್ಟಿಗೆಯನ್ನೂ ಹಿಸ್ಸೋಪನ್ನೂ ರಕ್ತವರ್ಣವುಳ್ಳ ದಾರವನ್ನೂ ತೆಗೆದುಕೊಂಡು ಹಸುವಿನ ದಹನದಲ್ಲಿ ಹಾಕಬೇಕು.</verse>
				<verse number="7">ಆಗ ಯಾಜಕನು ತನ್ನ ವಸ್ತ್ರಗಳನ್ನು ತೊಳೆದುಕೊಂಡು, ತನ್ನ ಶರೀರವನ್ನು ನೀರಿನಲ್ಲಿ ತೊಳೆದುಕೊಂಡ ನಂತರ ಪಾಳೆಯದೊಳಗೆ ಬರಬಹುದು. ಆದರೂ ಯಾಜಕನು ಸಂಜೆಯವರೆಗೂ ಅಶುದ್ಧನಾಗಿರುವನು.</verse>
				<verse number="8">ಅದನ್ನು ಸುಡುವವನು ತನ್ನ ವಸ್ತ್ರಗಳನ್ನು ನೀರಿನಲ್ಲಿ ತೊಳೆದುಕೊಂಡು, ಸ್ನಾನಮಾಡಬೇಕು. ಅವನೂ ಸಹ ಆ ದಿನದ ಸಂಜೆಯವರೆಗೆ ಅಶುದ್ಧನಾಗಿರುವನು.</verse>
				<verse number="9">“ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ, ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಾಯೇಲ್ ಸಮೂಹದವರ ಉಪಯೋಗಕ್ಕಾಗಿ ನೀವು ಜೋಪಾನವಾಗಿಡಬೇಕು. ಅದು ದೋಷಪರಿಹಾರಕವಾದುದು. ಆದ್ದರಿಂದ ಶುದ್ಧೀಕರಣ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅಲ್ಲೇ ಇಟ್ಟಿರಬೇಕು.</verse>
				<verse number="10">ಹಸುವಿನ ಬೂದಿಯನ್ನು ಕೂಡಿಸಿದವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು, ಸಂಜೆಯವರೆಗೆ ಅಶುದ್ಧನಾಗಿರಬೇಕು. ಇದು ಇಸ್ರಾಯೇಲರಿಗೂ ಅವರ ಮಧ್ಯದಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ಶಾಶ್ವತ ಕಟ್ಟಳೆಯಾಗಿದೆ.</verse>
				<verse number="11">“ಮನುಷ್ಯನ ಶವವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರುವನು.</verse>
				<verse number="12">ಅವನು ಇದರಿಂದ ಮೂರನೆಯ ದಿವಸದಲ್ಲಿ ತನ್ನನ್ನು ಶುದ್ಧೀಕರಿಸಿಕೊಂಡು ಏಳನೆಯ ದಿವಸದಲ್ಲಿ ಶುದ್ಧನಾಗಬೇಕು. ಆದರೆ ಅವನು ಮೂರನೆಯ ದಿವಸದಲ್ಲಿ ತನ್ನನ್ನು ಶುದ್ಧಮಾಡಿಕೊಳ್ಳದಿದ್ದರೆ, ಏಳನೆಯ ದಿವಸದಲ್ಲಿ ಶುದ್ಧನಾಗಲಾರನು.</verse>
				<verse number="13">ಸತ್ತ ಮನುಷ್ಯನ ಶವವನ್ನು ಮುಟ್ಟಿ, ಶುದ್ಧಮಾಡಿಕೊಳ್ಳದವನು ಯೆಹೋವ ದೇವರ ಗುಡಾರವನ್ನು ಅಪವಿತ್ರಪಡಿಸುತ್ತಾನೆ, ಅಂಥವನನ್ನು ಇಸ್ರಾಯೇಲಿನವರೊಳಗಿಂದ ತೆಗೆದುಹಾಕಬೇಕು, ಶುದ್ಧೀಕರಣದ ನೀರು ಅವನ ಮೇಲೆ ಚಿಮುಕಿಸದ ಕಾರಣ ಅವನು ಅಶುದ್ಧನಾಗಿದ್ದಾನೆ. ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇರುವುದು.</verse>
				<verse number="14">“ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತರೆ, ಅವನ ವಿಷಯವಾದ ನಿಯಮವೇನೆಂದರೆ: ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ, ಡೇರೆಯಲ್ಲಿರುವವರೆಲ್ಲರೂ ಏಳು ದಿವಸಗಳವರೆಗೆ ಅಶುದ್ಧರಾಗಿರುವರು.</verse>
				<verse number="15">ಮುಚ್ಚಳ ಹಾಕದೆ ತೆರೆದಿರುವ ಸಾಮಾನುಗಳೆಲ್ಲಾ ಅಶುದ್ಧವಾಗಿರುವುವು.</verse>
				<verse number="16">“ಇದಲ್ಲದೆ ಬಯಲಿನಲ್ಲಿ ಖಡ್ಗದಿಂದ ಹತನಾದ ವ್ಯಕ್ತಿಯನ್ನು ಮುಟ್ಟಿದವರೂ ಅಥವಾ ಬೇರೆ ಯಾವ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬನ್ನಾಗಲಿ, ಸಮಾಧಿಯನ್ನಾಗಲಿ ಮುಟ್ಟಿದವರೆಲ್ಲರೂ ಏಳು ದಿವಸ ಅಪವಿತ್ರರಾಗಿರುವರು.</verse>
				<verse number="17">“ಅಪವಿತ್ರನಾದವನನ್ನು ಶುದ್ಧಪಡಿಸಬೇಕಾದರೆ ಆ ದೋಷಪರಿಹಾರಕವಾದ ಬೂದಿಯನ್ನು ತೆಗೆದುಕೊಂಡು, ಒಂದು ಪಾತ್ರೆಯೊಳಗಿಟ್ಟು, ಅದರ ಮೇಲೆ ಹರಿಯುವ ನೀರನ್ನು ಹಾಕಬೇಕು.</verse>
				<verse number="18">ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತೆಗೆದುಕೊಂಡು ನೀರಿನಲ್ಲಿ ಅದ್ದಿ, ಆ ಡೇರೆಯ ಮೇಲೆಯೂ, ಸಮಸ್ತ ಸಲಕರಣೆಗಳ ಮೇಲೆಯೂ, ಅದರಲ್ಲಿರುವ ಜನರ ಮೇಲೆಯೂ ಚಿಮುಕಿಸಬೇಕು. ಹಾಗೆಯೇ ಎಲುಬನ್ನಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯನ್ನಾಗಲಿ ಮುಟ್ಟಿದವರ ಮೇಲೆಯೂ ಚಿಮುಕಿಸಬೇಕು.</verse>
				<verse number="19">ಪವಿತ್ರನಾದವನು ಅಪವಿತ್ರನಾದವನ ಮೇಲೆ ಮೂರನೆಯ ದಿವಸದಲ್ಲಿಯೂ, ಏಳನೆಯ ದಿವಸದಲ್ಲಿಯೂ ಅದನ್ನು ಚಿಮುಕಿಸಲಿ. ಏಳನೆಯ ದಿವಸದಲ್ಲಿ ಅವನು ತನ್ನನ್ನು ಪವಿತ್ರ ಮಾಡಿಕೊಂಡು, ತನ್ನ ವಸ್ತ್ರಗಳನ್ನು ತೊಳೆದುಕೊಂಡು, ನೀರಿನಲ್ಲಿ ಸ್ನಾನ ಮಾಡಲಿ. ಹೀಗೆ ಸಂಜೆಯಲ್ಲಿ ಪವಿತ್ರನಾಗುವನು.</verse>
				<verse number="20">ಆದರೆ ಅಪವಿತ್ರನಾಗಿದ್ದು, ತನ್ನನ್ನು ಶುದ್ಧಪಡಿಸಿಕೊಳ್ಳದವನು ಸಭೆಯ ಮಧ್ಯದಿಂದ ತೆಗೆದುಹಾಕಬೇಕು ಏಕೆಂದರೆ ಅವನು ಯೆಹೋವ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ. ನೀರು ಅವನ ಮೇಲೆ ಚಿಮಿಕಿಸಿಕೊಳ್ಳದ ಕಾರಣ ಅವನು ಅಪವಿತ್ರನೇ.</verse>
				<verse number="21">ಇದು ಅವರಿಗೆ ಶಾಶ್ವತ ಕಟ್ಟಳೆಯಾಗಿರಬೇಕು. “ಶುದ್ಧೀಕರಣದ ನೀರನ್ನು ಚಿಮುಕಿಸುವವನು ತನ್ನ ವಸ್ತ್ರಗಳನ್ನು ತೊಳೆದುಕೊಳ್ಳಬೇಕು ಮತ್ತು ಆ ನೀರು ಯಾರಿಗೆ ಸೋಂಕುವುದೋ ಅವನು ಆ ದಿನದ ಸಂಜೆಯವರೆಗೆ ಅಪವಿತ್ರನಾಗಿರುವನು.</verse>
				<verse number="22">ಇದಲ್ಲದೆ ಅಪವಿತ್ರನಾದವನು ಮುಟ್ಟುವಂಥಾದ್ದೆಲ್ಲ ಅಪವಿತ್ರವಾಗುವುದು, ಅವನನ್ನು ಮುಟ್ಟಿದವನು ಸಂಜೆಯವರೆಗೆ ಅಪವಿತ್ರನಾಗಿರುವನು,” ಎಂದು ಹೇಳಿದರು.</verse>
			</chapter>
			<chapter number="20">
				<verse number="1">ಇಸ್ರಾಯೇಲರ ಸರ್ವ ಸಮೂಹದವರು ಚಿನ್ ಎಂಬ ಮರುಭೂಮಿಗೆ ಮೊದಲನೆಯ ತಿಂಗಳಿನಲ್ಲಿ ಬಂದರು. ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಮರಣಹೊಂದಿದಳು, ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.</verse>
				<verse number="2">ಆಗ ಜನರಿಗೆ ನೀರು ಇಲ್ಲದೆ ಇರಲಾಗಿ ಅವರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡರು.</verse>
				<verse number="3">ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ, “ನಮ್ಮ ಸಹೋದರರು ಯೆಹೋವ ದೇವರ ಮುಂದೆ ಸತ್ತು ಹೋದಾಗಲೇ, ನಾವು ಸಹ ಸತ್ತು ಹೋಗಿದ್ದರೆ ಚೆನ್ನಾಗಿತ್ತು.</verse>
				<verse number="4">ನಾವೂ ನಮ್ಮ ಪಶುಗಳೂ ಸಾಯುವ ಹಾಗೆ ನೀವು ಏಕೆ ಯೆಹೋವ ದೇವರ ಸಭೆಯವರಾದ ನಮ್ಮನ್ನೂ ಈ ಮರುಭೂಮಿಗೆ ತಂದಿರಿ.</verse>
				<verse number="5">ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವುದಕ್ಕೆ ಏಕೆ ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಕರಕೊಂಡು ಬಂದಿರಿ. ಈ ಸ್ಥಳದಲ್ಲಿ ಧಾನ್ಯವಾದರೂ ಅಂಜೂರವಾದರೂ ದ್ರಾಕ್ಷಿ ತೋಟವಾದರೂ ದಾಳಿಂಬೆ ಹಣ್ಣಾದರೂ ಇಲ್ಲ. ಕುಡಿಯುವುದಕ್ಕೆ ನೀರು ಸಹ ಇಲ್ಲ,” ಎಂದರು.</verse>
				<verse number="6">ಆಗ ಮೋಶೆ, ಆರೋನನೂ ಜನಸಮೂಹದ ಎದುರಿನಿಂದ ದೇವದರ್ಶನ ಗುಡಾರದ ಬಾಗಿಲಿನೊಳಗೆ ಹೋಗಿ, ಸಾಷ್ಟಾಂಗವೆರಗಿದರು. ಯೆಹೋವ ದೇವರ ಮಹಿಮೆಯು ಅವರಿಗೆ ಕಾಣಬಂತು.</verse>
				<verse number="7">ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,</verse>
				<verse number="8">“ಕೋಲನ್ನು ತೆಗೆದುಕೊಂಡು ನೀನು ನಿನ್ನ ಸಹೋದರ ಆರೋನನು ಜನರನ್ನು ಕೂಡಿಸಿಕೊಂಡು, ಅವರ ಕಣ್ಣುಗಳ ಮುಂದೆ ಬಂಡೆಯ ಸಂಗಡ ಮಾತನಾಡಿರಿ. ಅದು ತನ್ನ ನೀರನ್ನು ಕೊಡುವುದು. ನೀನು ಅವರಿಗೋಸ್ಕರ ಬಂಡೆಯೊಳಗಿಂದ ನೀರನ್ನು ಹೊರಗೆ ತರುವೆ, ಜನರಿಗೂ ಅವರ ಪಶುಗಳಿಗೂ ನೀನು ಕುಡಿಯಲು ಕೊಡಬಹುದು,” ಎಂದು ಹೇಳಿದರು.</verse>
				<verse number="9">ಆಗ ಮೋಶೆಯು ಯೆಹೋವ ದೇವರ ಸನ್ನಿಧಿಯಿಂದ ಹೊರಟು, ತನಗೆ ಆಜ್ಞಾಪಿಸಿದ ಹಾಗೆ ಕೋಲನ್ನು ತೆಗೆದುಕೊಂಡನು.</verse>
				<verse number="10">ಮೋಶೆಯೂ, ಆರೋನನೂ ಜನರನ್ನು ಬಂಡೆಯ ಮುಂದೆ ಕೂಡಿಸಿ, ಅವರಿಗೆ, “ತಿರುಗಿ ಬಿದ್ದವರೇ ಕೇಳಿರಿ, ನಾವು ನಿಮಗೋಸ್ಕರ ಈ ಬಂಡೆಯೊಳಗಿಂದ ನೀರನ್ನು ಹೊರಡಿಸಬೇಕೋ?” ಎಂದರು.</verse>
				<verse number="11">ಮೋಶೆಯು ತನ್ನ ಕೈಯನ್ನು ಎತ್ತಿ, ತನ್ನ ಕೋಲಿನಿಂದ ಬಂಡೆಯನ್ನು ಎರಡು ಸಾರಿ ಹೊಡೆದನು. ಆಗ ಬಹಳ ನೀರು ಹೊರಗೆ ಬಂತು, ಜನರೂ ಅವರ ಪಶುಗಳೂ ಕುಡಿದರು.</verse>
				<verse number="12">ಆಗ ಯೆಹೋವ ದೇವರು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ, “ನನ್ನಲ್ಲಿ ವಿಶ್ವಾಸವಿಡದೆ ಹೋದಕಾರಣ ನೀವು ಇಸ್ರಾಯೇಲರ ಕಣ್ಣುಗಳ ಮುಂದೆ ನನ್ನನ್ನು ಪರಿಶುದ್ಧನಾಗಿ ಗೌರವಿಸುವುದಕ್ಕೆ, ನಾನು ಅವರಿಗೆ ಕೊಡುವ ದೇಶದಲ್ಲಿ ನೀವು ಅವರನ್ನು ಸೇರಿಸುವುದಿಲ್ಲ,” ಎಂದರು.</verse>
				<verse number="13">ಇಸ್ರಾಯೇಲರು ಯೆಹೋವ ದೇವರ ಸಂಗಡ ವ್ಯಾಜ್ಯವಾಡಿದ್ದಕ್ಕಾಗಿ ದೇವರು ಅವರಲ್ಲಿ ತಮ್ಮನ್ನು ಪರಿಶುದ್ಧ ಮಾಡಿಕೊಂಡ ಮೆರೀಬಾ ಸ್ಥಳದ ನೀರು ಇದೇ.</verse>
				<verse number="14">ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಿಮ್ಮ ಸಹೋದರರಾದ ಇಸ್ರಾಯೇಲರು ಹೇಳುವುದೇನೆಂದರೆ, ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.</verse>
				<verse number="15">ನಮ್ಮ ಪಿತೃಗಳು ಈಜಿಪ್ಟಿಗೆ ಇಳಿದು ಹೋದರು. ಈಜಿಪ್ಟಿನಲ್ಲಿ ಬಹಳ ದಿವಸ ವಾಸವಾಗಿದ್ದೆವು ಮತ್ತು ಈಜಿಪ್ಟಿನವರು ನಮಗೂ, ನಮ್ಮ ಪಿತೃಗಳಿಗೆ ಕೇಡನ್ನು ಮಾಡಿದರು.</verse>
				<verse number="16">ಆದಕಾರಣ ನಾವು ಯೆಹೋವ ದೇವರಿಗೆ ಕೂಗಿದೆವು. ಅವರು ನಮ್ಮ ಧ್ವನಿಯನ್ನು ಕೇಳಿ, ದೂತನನ್ನು ಕಳುಹಿಸಿ, ನಮ್ಮನ್ನು ಈಜಿಪ್ಟಿನೊಳಗಿಂದ ನಮ್ಮನ್ನು ಹೊರಗೆ ತಂದರು. “ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿಯದಲ್ಲಿ ಇದ್ದೇವೆ.</verse>
				<verse number="17">ನಮ್ಮನ್ನು ನಿನ್ನ ದೇಶದೊಳಗಿಂದ ದಾಟಿ ಹೋಗಗೊಡಿಸು; ನಾವು ಹೊಲವನ್ನಾದರೂ, ದ್ರಾಕ್ಷಿ ತೋಟವನ್ನಾದರೂ ದಾಟಿ ಹೋಗುವುದಿಲ್ಲ; ರಾಜಮಾರ್ಗದಲ್ಲಿ ಮಾತ್ರ ಹೋಗುತ್ತೇವೆ; ನಿನ್ನ ಮೇರೆಯನ್ನು ನಾವು ದಾಟುವವರೆಗೆ ಬಲಗಡೆಗಾದರೂ, ಎಡಗಡೆಗಾದರೂ ನಾವು ತಿರುಗುವುದಿಲ್ಲ,” ಎಂದು ವಿನಂತಿಸಿದನು.</verse>
				<verse number="18">ಎದೋಮ್ಯರು ದೂತರಿಗೆ, “ನೀನು ಈ ಕಡೆಯಲ್ಲಿ ದಾಟಿ ಹೋಗಬೇಡ. ಹೋದರೆ ನಾನು ಖಡ್ಗದಿಂದ ನಿನ್ನ ಮೇಲೆ ದಾಳಿಗೆ ಬರುವೆನು,” ಎಂದನು.</verse>
				<verse number="19">ಅದಕ್ಕೆ ಇಸ್ರಾಯೇಲರು ಅವನಿಗೆ, “ನಾವು ರಾಜಮಾರ್ಗದಲ್ಲಿ ಹೋಗುತ್ತೇವೆ. ನಮ್ಮ ಪಶುಗಳು ನಿನ್ನ ನೀರು ಕುಡಿದರೆ, ಅದರ ಕ್ರಯವನ್ನು ಕೊಡುತ್ತೇವೆ. ನಮ್ಮ ಕಾಲುಗಳಿಂದ ದಾಟಿ ಹೋಗುವುದೇ ಹೊರತು ಮತ್ತೇನೂ ಮಾಡುವುದಿಲ್ಲ,” ಎಂದು ಹೇಳಿ ಕಳುಹಿಸಿದನು.</verse>
				<verse number="20">ಆದರೆ ಅವನು, “ನೀವು ದಾಟಬಾರದು,” ಎಂದನು. ಎದೋಮ್ಯರು ಬಹುಜನರಿಂದಲೂ, ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಯುದ್ಧಕ್ಕೆ ಬಂದರು.</verse>
				<verse number="21">ಈ ಪ್ರಕಾರ ಎದೋಮ್ಯನು ಇಸ್ರಾಯೇಲರನ್ನು ತನ್ನ ಮೇರೆಯಲ್ಲಿ ದಾಟಗೊಡಿಸಲಿಲ್ಲ. ಆದಕಾರಣ ಇಸ್ರಾಯೇಲರು ಅವನ ಕಡೆಯಿಂದ ತಿರುಗಿಕೊಂಡು ಹೊರಟು ಹೋದರು.</verse>
				<verse number="22">ಇಸ್ರಾಯೇಲರ ಸಮಸ್ತ ಸಮೂಹದವರು ಕಾದೇಶಿನಿಂದ ಪ್ರಯಾಣಮಾಡಿ, ಹೋರ್ ಎಂಬ ಬೆಟ್ಟದ ಬಳಿಗೆ ಬಂದರು.</verse>
				<verse number="23">ಆಗ ಯೆಹೋವ ದೇವರು ಎದೋಮ್ಯ ದೇಶದ ಮೇರೆಯ ಮೇಲಿರುವ ಹೋರ್ ಎಂಬ ಬೆಟ್ಟದಲ್ಲಿ ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ,</verse>
				<verse number="24">“ಆರೋನನು ತನ್ನ ಪಿತೃಗಳ ಸಂಗಡ ಸೇರುವನು, ಏಕೆಂದರೆ ನೀವು ಮೆರೀಬಾದ ನೀರಿನ ಹತ್ತಿರ ನನ್ನ ಮಾತಿಗೆ ತಿರುಗಿಬಿದ್ದದರಿಂದ, ನಾನು ಇಸ್ರಾಯೇಲರಿಗೆ ಕೊಡುವ ದೇಶಕ್ಕೆ ಅವನು ಪ್ರವೇಶಿಸುವುದಿಲ್ಲ.</verse>
				<verse number="25">ಆರೋನನನ್ನೂ, ಅವನ ಮಗ ಎಲಿಯಾಜರನನ್ನೂ ತೆಗೆದುಕೊಂಡು, ಅವರನ್ನು ಹೋರ್ ಬೆಟ್ಟಕ್ಕೆ ಕರೆದುಕೊಂಡು ಬಾ.</verse>
				<verse number="26">ಆರೋನನ ವಸ್ತ್ರಗಳನ್ನು ತೆಗೆದು, ಅವುಗಳನ್ನು ಅವನ ಮಗ ಎಲಿಯಾಜರನಿಗೆ ತೊಡಿಸು. ಆರೋನನು ಅಲ್ಲಿ ದೇಹವನ್ನು ಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಬೇಕು,” ಎಂದರು.</verse>
				<verse number="27">ಮೋಶೆಯು ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರ ಮಾಡಿದನು. ಅವರು ಸಮಸ್ತ ಸಭೆಯವರು ನೋಡುತ್ತಿರುವಾಗ ಹೋರ್ ಬೆಟ್ಟವನ್ನೇರಿದರು.</verse>
				<verse number="28">ಮೋಶೆಯು ಆರೋನನ ವಸ್ತ್ರಗಳನ್ನು ತೆಗೆದು, ಅವನ ಮಗ ಎಲಿಯಾಜರನಿಗೆ ತೊಡಿಸಿದನು. ಆಗ ಆರೋನನು ಬೆಟ್ಟದ ತುದಿಯಲ್ಲಿ ಸತ್ತನು. ಮೋಶೆಯೂ, ಎಲಿಯಾಜರನೂ ಬೆಟ್ಟದಿಂದ ಇಳಿದರು.</verse>
				<verse number="29">ಆರೋನನು ತೀರಿಹೋದನೆಂದು ಸಭೆಯೆಲ್ಲಾ ನೋಡಿದಾಗ, ಇಸ್ರಾಯೇಲರೆಲ್ಲರೂ ಆರೋನನಿಗೋಸ್ಕರ ಮೂವತ್ತು ದಿವಸಗಳವರೆಗೂ ದುಃಖಿಸಿದರು.</verse>
			</chapter>
			<chapter number="21">
				<verse number="1">ನೆಗೆವನಲ್ಲಿ ವಾಸಿಸುವ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು, ಇಸ್ರಾಯೇಲರು ಅತಾರೀಮ್ ಮಾರ್ಗವಾಗಿ ಬರುತ್ತಿದ್ದಾರೆಂದು ಕೇಳಿ, ಅವರ ಸಂಗಡ ಯುದ್ಧಮಾಡಿ, ಅವರಲ್ಲಿ ಕೆಲವರನ್ನು ಸೆರೆಹಿಡಿದನು.</verse>
				<verse number="2">ಆಗ ಇಸ್ರಾಯೇಲರು ಯೆಹೋವ ದೇವರಿಗೆ ಪ್ರಮಾಣಮಾಡಿ, “ನೀನು ಈ ಜನರನ್ನು ನಮ್ಮ ಕೈಯಲ್ಲಿ ನಿಜವಾಗಿ ಒಪ್ಪಿಸಿಕೊಟ್ಟರೆ, ನಾವು ಅವರ ಪಟ್ಟಣಗಳನ್ನು ಸಂಪೂರ್ಣವಾಗಿ ನಾಶಮಾಡುವೆವು,” ಎಂದರು.</verse>
				<verse number="3">ಆಗ ಯೆಹೋವ ದೇವರು ಇಸ್ರಾಯೇಲರ ಧ್ವನಿಯನ್ನು ಕೇಳಿ ಕಾನಾನ್ಯರನ್ನು ಒಪ್ಪಿಸಿಕೊಟ್ಟನು. ಇಸ್ರಾಯೇಲರು ಅವರನ್ನೂ ಅವರ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದರು. ಆ ಸ್ಥಳಕ್ಕೆ ಹೊರ್ಮಾ ಎಂದು ಹೆಸರಿಟ್ಟರು.</verse>
				<verse number="4">ಅವರು ಹೋರ್ ಎಂಬ ಬೆಟ್ಟದಿಂದ ಹೊರಟು, ಎದೋಮ್ಯರ ದೇಶವನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಸಮುದ್ರದ ಮಾರ್ಗವಾಗಿ ಪ್ರಯಾಣಮಾಡಿದರು. ಆದರೆ ಜನರು ಈ ಪ್ರಯಾಣದಿಂದ ಆಯಾಸವಾಗಿ ಬಹಳ ಕುಂದಿಹೋದರು.</verse>
				<verse number="5">ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ, “ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಈಜಿಪ್ಟ್ ದೇಶದಿಂದ ಏಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ. ನಾವು ಈ ನಿಸ್ಸಾರವಾದ ರೊಟ್ಟಿಯನ್ನು ತಿಂದು ನಮಗೆ ಬೇಸರವಾಗಿದೆ,” ಎಂದರು.</verse>
				<verse number="6">ಆಗ ಯೆಹೋವ ದೇವರು ಜನರೊಳಗೆ ವಿಷಸರ್ಪಗಳನ್ನು ಕಳುಹಿಸಿದರು. ಅವು ಜನರನ್ನು ಕಚ್ಚಿದ್ದರಿಂದ, ಇಸ್ರಾಯೇಲರಲ್ಲಿ ಬಹುಜನರು ಸತ್ತುಹೋದರು.</verse>
				<verse number="7">ಆದ್ದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ಯೆಹೋವ ದೇವರಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ. ಯೆಹೋವ ದೇವರು ನಮ್ಮ ಮೇಲಿಂದ ಸರ್ಪಗಳನ್ನು ದೂರಮಾಡುವ ಹಾಗೆ ಪ್ರಾರ್ಥನೆ ಮಾಡು,” ಎಂದರು. ಆಗ ಮೋಶೆಯು ಜನರಿಗೋಸ್ಕರ ಪ್ರಾರ್ಥನೆಮಾಡಿದನು.</verse>
				<verse number="8">ಯೆಹೋವ ದೇವರು ಮೋಶೆಗೆ, “ನೀನು ಕಂಚಿನಿಂದ ಒಂದು ಸರ್ಪವನ್ನು ಮಾಡಿಸಿಕೊಂಡು, ಒಂದು ಕಂಬದ ಮೇಲೆ ಇಡು. ಆಗ ಕಚ್ಚಿಸಿಕೊಂಡವರೆಲ್ಲರೂ ಅದರ ಮೇಲೆ ದೃಷ್ಟಿ ಇಟ್ಟರೆ ಅವರು ಬದುಕುವರು,” ಎಂದರು.</verse>
				<verse number="9">ಆಗ ಮೋಶೆಯು ಕಂಚಿನ ಸರ್ಪವನ್ನು ಮಾಡಿ ಕಂಬದ ಮೇಲೆ ಇಟ್ಟನು. ಸರ್ಪದಿಂದ ಕಚ್ಚಿಸಿಕೊಂಡವರಲ್ಲಿ ಯಾರು ಆ ಕಂಚಿನ ಸರ್ಪದ ಕಡೆಗೆ ದೃಷ್ಟಿ ಇಟ್ಟು ನೋಡಿದರೋ, ಅವರು ಬದುಕಿಕೊಂಡರು.</verse>
				<verse number="10">ಇಸ್ರಾಯೇಲರು ಹೊರಟು ಓಬೋತಿನಲ್ಲಿ ಇಳಿದುಕೊಂಡರು.</verse>
				<verse number="11">ಓಬೋತಿನಿಂದ ಹೊರಟು ಮೋವಾಬ್ ದೇಶಕ್ಕೆದುರಾಗಿ ಸೂರ್ಯೋದಯದ ಕಡೆಯಲ್ಲಿರುವ ಮರುಭೂಮಿಯಲ್ಲಿ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.</verse>
				<verse number="12">ಅಲ್ಲಿಂದ ಅವರು ಹೊರಟು ಜೆರೆದ್ ಎಂಬ ಹಳ್ಳದ ಬಳಿಯಲ್ಲಿ ಇಳಿದುಕೊಂಡರು.</verse>
				<verse number="13">ಅಲ್ಲಿಂದ ಹೊರಟು ಅಮೋರಿಯರ ಪ್ರದೇಶದಿಂದ ಹೊರಗೆ ಬರುವ ಮರುಭೂಮಿಯಲ್ಲಿರುವ ಅರ್ನೋನ್ ಹೊಳೆಯ ಈಚೆಯಲ್ಲಿ ಇಳಿದುಕೊಂಡರು. ಏಕೆಂದರೆ ಅರ್ನೋನ್ ಮೋವಾಬರಿಗೂ ಅಮೋರಿಯರಿಗೂ ಮಧ್ಯದ ಮೋವಾಬಿನ ಗಡಿಯಾಗಿದೆ.</verse>
				<verse number="14">ಆದಕಾರಣ ಯೆಹೋವ ದೇವರ ಯುದ್ಧಗಳ ಪುಸ್ತಕದಲ್ಲಿ ಹೀಗೆಂದು ಬರೆದಿದೆ: “ಸೂಫಕ್ಕೆ ಸೇರಿದ ವಾಹೇಬನ್ನು, ಅರ್ನೋನ್</verse>
				<verse number="15">ಹೊಳೆಗೆ ಸೇರುವ ಹಳ್ಳಗಳನ್ನು, ಆರ್ ಪಟ್ಟಣದ ತನಕ ಮೋವಾಬಿನ ಎಲ್ಲೆಯಾಗಿರುವ ಕೊರಕಲನ್ನು.”</verse>
				<verse number="16">ಅವರು ಅಲ್ಲಿಂದ ಬೇರ್ ಎಂಬಲ್ಲಿಗೆ ಬಂದರು. ಯೆಹೋವ ದೇವರು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು,” ಎಂದು ಯೆಹೋವ ದೇವರು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯನ್ನು ಕುರಿತೇ.</verse>
				<verse number="17">ಆಗ ಇಸ್ರಾಯೇಲರು ಈ ಹಾಡನ್ನು ಹಾಡಿದರು: “ಬಾವಿಯೇ, ಉಕ್ಕು, ಜನರೇ, ಅದರ ಬಗ್ಗೆ ನೀವು ಹಾಡಿರಿ.</verse>
				<verse number="18">ಪ್ರಭುಗಳು ಈ ಬಾವಿಯನ್ನು ಅಗೆದರು. ಜನರ ಅಧಿಪತಿಗಳು ನ್ಯಾಯಾಧಿಪತಿಯ ಸಲಹೆಯ ಮೇರೆಗೆ ತಮ್ಮ ಕೋಲುಗಳಿಂದ ಅದನ್ನು ತೋಡಿದರು.” ಆಮೇಲೆ ಅವರು ಮರುಭೂಮಿಯಿಂದ ಮತ್ತಾನಕ್ಕೆ ಬಂದರು.</verse>
				<verse number="19">ಇದಲ್ಲದೆ ಅವರು ಮತ್ತಾನದಿಂದ ನಹಲಿಯೇಲಕ್ಕೆ ಬಂದರು. ನಹಲಿಯೇಲದಿಂದ ಬಾಮೋತಿಗೆ ಬಂದರು.</verse>
				<verse number="20">ಬಾಮೋತಿನಿಂದ ಮೋವಾಬ್ ದೇಶದಲ್ಲಿರುವ ಕಣಿವೆಯಿಂದ ಪಿಸ್ಗಾ ಎಂಬ ಬೆಟ್ಟದ ತುದಿಗೆ ಬಂದರು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಮರಳುಗಾಡು ಕಾಣಿಸುತ್ತದೆ.</verse>
				<verse number="21">ಆಗ ಇಸ್ರಾಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ,</verse>
				<verse number="22">“ನಾವು ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಯಾವುದೇ ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ, ಬಾವಿಯ ನೀರನ್ನು ಕುಡಿಯದೆ, ನಿನ್ನ ದೇಶವನ್ನು ದಾಟುವವರೆಗೆ ರಾಜಮಾರ್ಗದಲ್ಲಿಯೇ ಹೋಗುತ್ತೇವೆ,” ಎಂದು ಬೇಡಿಕೊಂಡರು.</verse>
				<verse number="23">ಆದರೆ ಸೀಹೋನನು ಇಸ್ರಾಯೇಲರನ್ನು ತನ್ನ ಮೇರೆಯಲ್ಲಿ ದಾಟಗೊಡಿಸದೆ, ತನ್ನ ಜನರೆಲ್ಲರನ್ನೂ ಕೂಡಿಸಿಕೊಂಡು, ಇಸ್ರಾಯೇಲರನ್ನು ಎದುರಿಸಲು ಮರುಭೂಮಿಗೆ ಹೊರಟನು. ಅವನು ಯಹಚಕ್ಕೆ ಬಂದು ಇಸ್ರಾಯೇಲರ ಸಂಗಡ ಯುದ್ಧಮಾಡಿದನು.</verse>
				<verse number="24">ಆದರೆ ಇಸ್ರಾಯೇಲರು ಅವನನ್ನು ಖಡ್ಗದಿಂದ ಹೊಡೆದು, ಅವನ ದೇಶವನ್ನು ಅರ್ನೋನ್ ನದಿಯಿಂದ ಯಬ್ಬೋಕ್ ನದಿಯವರೆಗೆ ಅಮ್ಮೋನನ ಮಕ್ಕಳ ಮೇರೆಯವರೆಗೂ ಸ್ವಾಧೀನಪಡಿಸಿಕೊಂಡರು. ಏಕೆಂದರೆ ಅಮ್ಮೋನನ ಮಕ್ಕಳ ಮೇರೆಯು ಬಲಿಷ್ಠವಾಗಿತ್ತು.</verse>
				<verse number="25">ಇಸ್ರಾಯೇಲರು ಆ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಇಸ್ರಾಯೇಲರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು.</verse>
				<verse number="26">ಹೆಷ್ಬೋನ್ ಪಟ್ಟಣವು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು. ಅವನು ಮೋವಾಬ್ ದೇಶದ ಹಿಂದಿನ ಅರಸನ ಸಂಗಡ ಯುದ್ಧಮಾಡಿ, ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯವರೆಗೂ ಅವನಿಂದ ವಶಪಡಿಸಿಕೊಂಡಿದ್ದನು.</verse>
				<verse number="27">ಇದರ ಬಗ್ಗೆ ಕವಿಗಳು ಹೀಗೆಂದು ಹಾಡಿದ್ದಾರೆ: “ಹೆಷ್ಬೋನಿಗೆ ಬನ್ನಿರಿ ಅದನ್ನು ತಿರುಗಿ ಕಟ್ಟಬೇಕು. ಸೀಹೋನನ ಪಟ್ಟಣವನ್ನು ಪುನಃಸ್ಥಾಪನೆ ಮಾಡಬೇಕು.</verse>
				<verse number="28">“ಏಕೆಂದರೆ ಬೆಂಕಿ ಹೆಷ್ಬೋನಿನಿಂದಲೂ, ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು, ಮೋವಾಬಿನ ಆರ್ ಎಂಬ ಪಟ್ಟಣವನ್ನೂ, ಅರ್ನೋನ್ ಹೊಳೆಯ ಬಳಿಯಲ್ಲಿರುವ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.</verse>
				<verse number="29">ಮೋವಾಬೇ, ನಿನಗೆ ದಿಕ್ಕಾರ! ಕೆಮೋಷಿನ ಜನವೇ ನಿಮಗೆ ದುರ್ಗತಿ ಉಂಟಾಯಿತಲ್ಲಾ! ಅವನು ತನ್ನ ಪುತ್ರರನ್ನು ದೇಶಭ್ರಷ್ಟರನ್ನಾಗಿಯೂ ತನ್ನ ಪುತ್ರಿಯರನ್ನು ಸೆರೆಯವರನ್ನಾಗಿಯೂ ಅಮೋರಿಯರ ಅರಸನಾದ ಸೀಹೋನನ ಸೆರೆಗೆ ಒಪ್ಪಿಸಿಕೊಟ್ಟನು.</verse>
				<verse number="30">“ನಾವು ಅವರನ್ನು ಪದಚ್ಚುತಿಗೊಳಿಸಿದೆವು. ಹೆಷ್ಬೋನು ದೀಬೋನಿನವರೆಗೂ ನಾಶವಾಯಿತು. ನಾವು ಅವರನ್ನು ಮೇದೆಬಾಕ್ಕೆ ಮುಟ್ಟುವ ನೋಫಹದ ತನಕ ಹಾಳುಮಾಡಿದೆವು.”</verse>
				<verse number="31">ಹೀಗೆ ಇಸ್ರಾಯೇಲರು ಅಮೋರಿಯರ ದೇಶದಲ್ಲಿ ವಾಸಮಾಡಿದರು.</verse>
				<verse number="32">ಇದಲ್ಲದೆ ಮೋಶೆಯು ಯಜ್ಜೇರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದನು. ಅವರು ಅವರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿರುವ ಅಮೋರಿಯರನ್ನು ಹೊರಡಿಸಿಬಿಟ್ಟರು.</verse>
				<verse number="33">ಅವರು ತಿರುಗಿ ಬಾಷಾನಿನ ಹಾದಿ ಏರಿದರು. ಬಾಷಾನಿನ ಅರಸನಾದ ಓಗನು ಎದ್ರೈಯಲ್ಲಿ ಯುದ್ಧಮಾಡುವುದಕ್ಕೆ ತನ್ನ ಸಮಸ್ತ ಜನರ ಸಂಗಡ ಅವರಿಗೆದುರಾಗಿ ಹೊರಟನು.</verse>
				<verse number="34">ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಅವನಿಗೆ ಭಯಪಡಬೇಡ, ಏಕೆಂದರೆ ನಿನ್ನ ಕೈಯೊಳಗೆ ನಾನು ಅವನನ್ನೂ ಅವನ ಸಮಸ್ತ ಜನರನ್ನೂ ಅವನ ದೇಶವನ್ನೂ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಇವನಿಗೂ ಮಾಡಬೇಕು,” ಎಂದರು.</verse>
				<verse number="35">ಈ ಪ್ರಕಾರ ಅವರು ಅವನನ್ನೂ ಅವನ ಮಕ್ಕಳನ್ನೂ ಅವನ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು, ಅವನ ದೇಶವನ್ನು ವಶಮಾಡಿಕೊಂಡರು.</verse>
			</chapter>
			<chapter number="22">
				<verse number="1">ನಂತರ ಇಸ್ರಾಯೇಲರು ಹೊರಟು ಯೊರ್ದನಿಗೆ ಈಚೆಯಲ್ಲಿರುವ ಮೋವಾಬಿನ ಬಯಲುಗಳಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಇಳಿದುಕೊಂಡರು.</verse>
				<verse number="2">ಆದರೆ ಚಿಪ್ಪೋರನ ಮಗ ಬಾಲಾಕನು ಇಸ್ರಾಯೇಲರು ಅಮೋರಿಯರಿಗೆ ಮಾಡಿದ್ದನ್ನೆಲ್ಲಾ ನೋಡಿದನು.</verse>
				<verse number="3">ಇದಲ್ಲದೆ ಮೋವಾಬಿನವರು, ಇಸ್ರಾಯೇಲರು ಬಹಳ ಜನರಾಗಿರುವುದರಿಂದ ಅವರಿಗೆ ಬಹಳವಾಗಿ ಅಂಜಿದರು. ಮೋವಾಬಿನವರು ಇಸ್ರಾಯೇಲರಿಗೆ ದಿಗಿಲುಪಟ್ಟರು.</verse>
				<verse number="4">ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ, “ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ, ಈಗ ಈ ಸಮೂಹವು ನಮ್ಮ ಸುತ್ತಲಿರುವುದನ್ನೆಲ್ಲಾ ಮೇಯುವುದು,” ಎಂದನು. ಆ ಕಾಲದಲ್ಲಿ ಚಿಪ್ಪೋರನ ಮಗ ಬಾಲಾಕನು ಮೋವಾಬ್ಯರ ಅರಸನಾಗಿದ್ದನು.</verse>
				<verse number="5">ಇವನು ಸ್ವಜನರ ನಾಡಾದ ಯೂಫ್ರೇಟೀಸ್ ನದಿಯ ತೀರದಲ್ಲಿರುವ ಪೆತೋರೂರಿಗೆ ದೂತರನ್ನು ಕಳುಹಿಸಿ, ಬೆಯೋರನ ಮಗ ಬಿಳಾಮನನ್ನೂ ಕರೆಯಿಸಿ, “ಒಂದು ಜನಾಂಗವು ಈಜಿಪ್ಟಿನಿಂದ ಹೊರಟು ಬಂದಿದೆ. ಅದು ದೇಶವನ್ನೆಲ್ಲಾ ಆವರಿಸಿಕೊಂಡು, ನನಗೆದುರಾಗಿ ವಾಸಿಸುತ್ತಿದೆ.</verse>
				<verse number="6">ಅವರು ನನಗಿಂತ ಬಲವುಳ್ಳವರಾಗಿದ್ದರಿಂದ ಈಗ ನೀನು ದಯಮಾಡಿ ಬಂದು, ಈ ಜನರನ್ನು ನನಗಾಗಿ ಶಪಿಸು. ಆಗ ನಾನು ಅವರನ್ನು ಗೆದ್ದು, ದೇಶದೊಳಗಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ಏಕೆಂದರೆ ನೀನು ಯಾವನನ್ನು ಆಶೀರ್ವದಿಸುತ್ತೀಯೋ, ಅವನು ಆಶೀರ್ವಾದ ಹೊಂದಿರುವನು; ನೀನು ಯಾವನನ್ನು ಶಪಿಸುತ್ತೀಯೋ, ಅವನು ಶಾಪಗ್ರಸ್ತನಾಗಿರುವನು; ಎಂದು ನಾನು ಬಲ್ಲೆನು,” ಎಂದು ಹೇಳಿ ಕಳುಹಿಸಿದನು.</verse>
				<verse number="7">ಆಗ ಮೋವಾಬಿನ ಹಿರಿಯರೂ ಮಿದ್ಯಾನಿನ ಹಿರಿಯರೂ ಭವಿಷ್ಯವಾಣಿ ಕೇಳಲು ಸಲ್ಲಿಸಬೇಕಾದ ಕಾಣಿಕೆಗಳನ್ನು ತೆಗೆದುಕೊಂಡು ಹೋದರು. ಅವರು ಬಿಳಾಮನ ಬಳಿಗೆ ಬಂದು, ಅವನಿಗೆ ಬಾಲಾಕನ ಮಾತುಗಳನ್ನು ಹೇಳಿದರು.</verse>
				<verse number="8">ಅವನು ಅವರಿಗೆ, “ಈ ರಾತ್ರಿ ಇಲ್ಲಿ ಇಳಿದುಕೊಳ್ಳಿರಿ. ಯೆಹೋವ ದೇವರು ನನಗೆ ಹೇಳುವ ಪ್ರಕಾರ ನಿಮಗೆ ಉತ್ತರವನ್ನು ಕೊಡುವೆನು,” ಎಂದು ಹೇಳಿದನು. ಆದಕಾರಣ ಮೋವಾಬಿನ ಪ್ರಭುಗಳು ಬಿಳಾಮನ ಸಂಗಡ ಇಳಿದುಕೊಂಡರು.</verse>
				<verse number="9">ದೇವರು ಬಿಳಾಮನ ಬಳಿಗೆ ಬಂದು, “ನಿನ್ನ ಸಂಗಡ ಇರುವ ಈ ಮನುಷ್ಯರು ಯಾರು?” ಎಂದರು.</verse>
				<verse number="10">ಬಿಳಾಮನು ದೇವರಿಗೆ, “ಚಿಪ್ಪೋರನ ಮಗನಾಗಿಯೂ ಮೋವಾಬಿನ ಅರಸನಾಗಿಯೂ ಇರುವ ಬಾಲಾಕನು ನನ್ನ ಬಳಿಗೆ ಹೇಳಿ ಕಳುಹಿಸಿದ್ದೇನೆಂದರೆ:</verse>
				<verse number="11">‘ಇಗೋ, ಈಜಿಪ್ಟ್ ದೇಶದಿಂದ ಹೊರಟಿರುವ ಒಂದು ಜನಾಂಗವು ದೇಶವನ್ನೆಲ್ಲಾ ಆವರಿಸಿಕೊಂಡಿದೆ. ಈಗ ನೀನು ಬಂದು ನನಗೋಸ್ಕರ ಅವರನ್ನು ಶಪಿಸು. ಒಂದು ವೇಳೆ ಅವರ ಸಂಗಡ ಯುದ್ಧಮಾಡಿ ಹೊರಗೆ ಹಾಕುವುದಕ್ಕೆ ನನ್ನಿಂದ ಸಾಧ್ಯವಾಗಬಹುದು,’ ಎಂದು ಹೇಳಿ ಕಳುಹಿಸಿದ್ದಾನೆ,” ಎಂದನು.</verse>
				<verse number="12">ಆಗ ದೇವರು ಬಿಳಾಮನಿಗೆ, “ನೀನು ಅವರ ಸಂಗಡ ಹೋಗಬೇಡ, ನೀನು ಆ ಜನರನ್ನು ಶಪಿಸಬೇಡ, ಏಕೆಂದರೆ ಅವರು ನನ್ನಿಂದ ಆಶೀರ್ವಾದ ಹೊಂದಿದವರು,” ಎಂದರು.</verse>
				<verse number="13">ಬಿಳಾಮನು ಉದಯದಲ್ಲಿ ಎದ್ದು ಬಾಲಾಕನ ಪ್ರಭುಗಳಿಗೆ, “ನಿಮ್ಮ ದೇಶಕ್ಕೆ ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಹೋಗುವುದಕ್ಕೆ ನನಗೆ ಅಪ್ಪಣೆ ಕೊಡಲಿಲ್ಲ,” ಎಂದನು.</verse>
				<verse number="14">ಆದಕಾರಣ ಮೋವಾಬಿನ ಪ್ರಭುಗಳು ಎದ್ದು ಬಾಲಾಕನ ಬಳಿಗೆ ಬಂದು, “ಬಿಳಾಮನು ನಮ್ಮ ಸಂಗಡ ಬರಲಿಲ್ಲ,” ಎಂದರು.</verse>
				<verse number="15">ಆದರೆ ಬಾಲಾಕನು ತಿರುಗಿ ಇವರಿಗಿಂತ ಹೆಚ್ಚು ಘನವುಳ್ಳವರಾದ ಅನೇಕ ಪ್ರಧಾನರನ್ನು ಕಳುಹಿಸಿದನು.</verse>
				<verse number="16">ಅವರು ಬಿಳಾಮನ ಬಳಿಗೆ ಬಂದು ಅವನಿಗೆ, “ಚಿಪ್ಪೋರನ ಮಗ ಬಾಲಾಕನು ಹೀಗೆ ಹೇಳುತ್ತಾನೆ: ನೀನು ದಯಮಾಡಿ ನನ್ನ ಬಳಿಗೆ ಬರಲು ಅಡ್ಡಿಮಾಡುವ ಯಾವುದಕ್ಕೂ ಅವಕಾಶ ಕೊಡಬಾರದು.</verse>
				<verse number="17">ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಹೇಳುವುದನ್ನೆಲ್ಲಾ ನಾನು ಮಾಡುವೆನು. ಆದಕಾರಣ ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸು,” ಎಂದನು.</verse>
				<verse number="18">ಬಿಳಾಮನು ಪ್ರತ್ಯುತ್ತರವಾಗಿ ಬಾಲಾಕನ ಸೇವಕರಿಗೆ, “ಬಾಲಾಕನು ನನಗೆ ತನ್ನ ಮನೆ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾಗಿರುವ ಯೆಹೋವ ದೇವರ ಮಾತನ್ನು ಮೀರಿ ಹೆಚ್ಚು ಕಡಿಮೆ ಏನನ್ನೂ ಮಾಡಲಾರೆನು.</verse>
				<verse number="19">ಆದರೆ ಈಗ ಯೆಹೋವ ದೇವರು ನನಗೆ ಮತ್ತೇನು ಹೇಳುವರೆಂದು ನಾನು ತಿಳಿದುಕೊಳ್ಳುವ ಹಾಗೆ, ನೀವು ಸಹ ದಯಮಾಡಿ ಈ ರಾತ್ರಿ ಇಲ್ಲಿ ಇಳಿದುಕೊಳ್ಳಿರಿ,” ಎಂದನು.</verse>
				<verse number="20">ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ, “ಈ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿದ್ದರೆ, ನೀನು ಎದ್ದು ಅವರ ಸಂಗಡ ಹೋಗು. ಆದರೆ ನಾನು ನಿನಗೆ ಹೇಳುವ ಮಾತಿನಂತೆಯೇ ನೀನು ಮಾಡಬೇಕು,” ಎಂದರು.</verse>
				<verse number="21">ಬಿಳಾಮನು ಬೆಳಿಗ್ಗೆ ಎದ್ದು, ತನ್ನ ಕತ್ತೆಯನ್ನು ಹತ್ತಿ, ಮೋವಾಬಿನ ಪ್ರಧಾನರ ಸಂಗಡ ಹೋದನು.</verse>
				<verse number="22">ಆದರೆ ಅವನು ಹೋದದ್ದರಿಂದ ದೇವರಿಗೆ ಕೋಪ ಬಂದಿತು. ಯೆಹೋವ ದೇವರ ದೂತನು ಅವನಿಗೆ ಎದುರಾಳಿಯಾಗಿ ಮಾರ್ಗದಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು. ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.</verse>
				<verse number="23">ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಅವನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ, ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು. ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸುವುದಕ್ಕೆ ಅದನ್ನು ಹೊಡೆದನು.</verse>
				<verse number="24">ಆದರೆ ಯೆಹೋವ ದೇವರ ದೂತನು ದ್ರಾಕ್ಷಿತೋಟಗಳ ನಡುವಿನ ಕಿರಿದಾದ ಹಾದಿಯಲ್ಲಿ ಎರಡೂ ಕಡೆಯಲ್ಲಿ ಗೋಡೆ ಇದ್ದಲ್ಲಿ ನಿಂತನು.</verse>
				<verse number="25">ಕತ್ತೆಯು ಯೆಹೋವ ದೇವರ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡು, ಬಿಳಾಮನ ಕಾಲನ್ನು ಗೋಡೆಗೆ ಒತ್ತಿ ಹಾಕಿತು. ಅವನು ಅದನ್ನು ಮತ್ತೆ ಹೆಚ್ಚಾಗಿ ಹೊಡೆದನು.</verse>
				<verse number="26">ಆಗ ಯೆಹೋವ ದೇವರ ದೂತನು ಮುಂದೆ ಹೋಗಿ ಬಲಕ್ಕೂ ಎಡಕ್ಕೂ ತಿರುಗುವುದಕ್ಕೆ ಮಾರ್ಗವಿಲ್ಲದ ಇಕ್ಕಟ್ಟಿನ ಸ್ಥಳದಲ್ಲಿ ನಿಂತನು.</verse>
				<verse number="27">ಕತ್ತೆಯು ಯೆಹೋವ ದೇವರ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಆದಕಾರಣ ಬಿಳಾಮನು ಕೋಪಿಸಿಕೊಂಡು ಕತ್ತೆಯನ್ನು ಬೆತ್ತದಿಂದ ಹೊಡೆದನು.</verse>
				<verse number="28">ಆಗ ಯೆಹೋವ ದೇವರು ಕತ್ತೆಗೆ ಮಾತಾಡುವ ಶಕ್ತಿಯನ್ನು ಕೊಟ್ಟರು. ಅದು ಬಿಳಾಮನಿಗೆ, “ಈಗ ನನ್ನನ್ನು ಮೂರು ಸಾರಿ ಹೊಡೆಯುವ ಹಾಗೆ ನಾನು ನಿನಗೆ ಏನು ಮಾಡಿದೆನು?” ಎಂದು ಕೇಳಿತು.</verse>
				<verse number="29">ಬಿಳಾಮನು ಕತ್ತೆಗೆ, “ನೀನು ನನಗೆ ಹಾಸ್ಯಮಾಡಿದೆಯಲ್ಲಾ? ನನ್ನ ಕೈಯಲ್ಲಿ ಖಡ್ಗ ಇದ್ದಿದ್ದರೆ, ನಾನು ಈಗಲೇ ನಿನ್ನನ್ನು ಕೊಂದು ಹಾಕುತ್ತಿದ್ದೆ,” ಎಂದನು.</verse>
				<verse number="30">ಕತ್ತೆಯು ಬಿಳಾಮನಿಗೆ, “ಈ ದಿವಸದವರೆಗೂ ನೀನು ಯಾವಾಗಲೂ ಸವಾರಿಮಾಡುತ್ತಿದ್ದ ಕತ್ತೆಯು ನಾನಲ್ಲವೋ? ನಾನು ಎಂದಾದರೂ ನಿನಗೆ ಈ ರೀತಿ ಮಾಡಿದೆನೋ?” ಎಂದು ಪ್ರಶ್ನಿಸಿತು. ಅದಕ್ಕವನು, “ಇಲ್ಲ,” ಎಂದನು.</verse>
				<verse number="31">ಆಗ ಯೆಹೋವ ದೇವರು ಬಿಳಾಮನ ಕಣ್ಣುಗಳನ್ನು ತೆರೆದರು. ಅವನು ಮಾರ್ಗದಲ್ಲಿ ನಿಂತಿದ್ದ ಯೆಹೋವ ದೇವರ ದೂತನನ್ನೂ, ಆತನ ಕೈಯಲ್ಲಿರುವ ಬಿಚ್ಚುಗತ್ತಿಯನ್ನೂ ನೋಡಿ ಬೋರಲು ಬಿದ್ದನು.</verse>
				<verse number="32">ಯೆಹೋವ ದೇವರ ದೂತನು ಅವನಿಗೆ, “ನಿನ್ನ ಕತ್ತೆಯನ್ನು ಈಗ ಮೂರು ಸಾರಿ ಹೊಡೆದದ್ದು ಏಕೆ? ಇಗೋ, ನಿನ್ನ ಮಾರ್ಗವು ನನ್ನ ಮುಂದೆ ವಕ್ರವಾಗಿರುವುದರಿಂದ ನಾನು ನಿನ್ನನ್ನು ತಡೆಯುವುದಕ್ಕೆ ಬಂದಿದ್ದೇನೆ.</verse>
				<verse number="33">ಆ ಕತ್ತೆ ನನ್ನನ್ನು ನೋಡಿ, ನನ್ನ ಮುಂದೆ ಈಗ ಮೂರು ಸಾರಿ ಓರೆಯಾಗಿ ಹೋಯಿತು. ಅದು ನನ್ನ ಮುಂದೆ ಓರೆಯಾಗಿ ಹೋಗದಿದ್ದರೆ, ನಿಶ್ಚಯವಾಗಿ ಆಗಲೇ ನಿನ್ನನ್ನು ಕೊಂದುಹಾಕಿ ಕತ್ತೆಯನ್ನು ಉಳಿಸುತ್ತಿದ್ದೆನು,” ಎಂದನು.</verse>
				<verse number="34">ಆಗ ಬಿಳಾಮನು ಯೆಹೋವ ದೇವರ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ. ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ, ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ,” ಎಂದನು.</verse>
				<verse number="35">ಆದರೆ ಯೆಹೋವ ದೇವರ ದೂತನು ಬಿಳಾಮನಿಗೆ, “ಈ ಮನುಷ್ಯರ ಸಂಗಡ ಹೋಗು ಆದರೆ ನಾನು ನಿನಗೆ ಹೇಳುವುದನ್ನೇ ಹೇಳಬೇಕೇ ಹೊರತು ಬೇರೆ ಯಾವದನ್ನೂ ಹೇಳಬಾರದು,” ಎಂದನು. ಹಾಗೆಯೇ ಬಿಳಾಮನು ಬಾಲಾಕನ ಪ್ರಭುಗಳ ಸಂಗಡ ಹೋದನು.</verse>
				<verse number="36">ಬಿಳಾಮನು ಬಂದನೆಂದು ಬಾಲಾಕನು ಕೇಳಿದಾಗ, ಅವನು ಕಡೆಯ ಮೇರೆಯಲ್ಲಿರುವ ಅರ್ನೋನ್ ಹೊಳೆಯ ತೀರದಲ್ಲಿದ್ದ ಮೋವಾಬಿನ ಪಟ್ಟಣಕ್ಕೆ ಬರಮಾಡಿಕೊಳ್ಳಲು ಹೊರಟನು.</verse>
				<verse number="37">ಬಾಲಾಕನು ಬಿಳಾಮನಿಗೆ, “ನಾನು ನಿನಗೆ ತುರ್ತಾಗಿ ಬರುವಂತೆ ಹೇಳಿ ಕಳುಹಿಸಲಿಲ್ಲವೋ? ನೀನು ನನ್ನ ಬಳಿಗೆ ಏಕೆ ಬರಲಿಲ್ಲ? ನಾನು ನಿನ್ನನ್ನು ಘನಪಡಿಸಲು ನಿಶ್ಚಯವಾಗಿ ಸಾಮರ್ಥ್ಯವುಳ್ಳವನಲ್ಲವೋ?” ಎಂದನು.</verse>
				<verse number="38">ಬಿಳಾಮನು ಬಾಲಾಕನಿಗೆ, “ಇಗೋ, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ಈಗ ನಿನಗೆ ಇಷ್ಟವಾಗುವಂಥದ್ದನ್ನು ಹೇಳುವುದು ನನಗೆ ಸಾಧ್ಯವಿಲ್ಲ? ದೇವರು ನನ್ನಿಂದ ಆಡಿಸಿದ ಮಾತನ್ನೇ ಹೇಳುವೆನು,” ಎಂದನು.</verse>
				<verse number="39">ಆಗ ಬಿಳಾಮನು ಬಾಲಾಕನ ಸಂಗಡ ಹೋದನು. ಇಬ್ಬರು ಕಿರ್ಯತ್ ಹುಚೋತಿಗೆ ಬಂದರು.</verse>
				<verse number="40">ಬಾಲಾಕನು ಎತ್ತುಗಳನ್ನೂ ಕುರಿಗಳನ್ನೂ ಅರ್ಪಿಸಿದನು. ಅದರಲ್ಲಿ ಸ್ವಲ್ಪವನ್ನು ಬಿಳಾಮನಿಗೂ ಅವನ ಸಂಗಡ ಇದ್ದ ಪ್ರಭುಗಳಿಗೂ ಕಳುಹಿಸಿದನು.</verse>
				<verse number="41">ಮರುದಿವಸದಲ್ಲಿ ಬಾಲಾಕನು ಬಿಳಾಮನನ್ನು ಕರೆದುಕೊಂಡು ಬಾಮೋತ್ ಬಾಳ್ ದೇವತೆಯ ಎತ್ತರವಾದ ಸ್ಥಳಕ್ಕೆ ಹತ್ತಿ, ಅಲ್ಲಿಂದ ಅವನು ಇಸ್ರಾಯೇಲ್ ಜನರ ಒಂದು ಭಾಗವನ್ನು ತೋರಿಸಿದನು.</verse>
			</chapter>
			<chapter number="23">
				<verse number="1">ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ನನಗೆ ಏಳು ಬಲಿಪೀಠಗಳನ್ನು ಕಟ್ಟಿ, ನನಗೆ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಸಿದ್ಧಮಾಡು,” ಎಂದನು.</verse>
				<verse number="2">ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿದನು. ಬಾಲಾಕನು ಮತ್ತು ಬಿಳಾಮನು ಒಂದೊಂದು ಹೋರಿಯನ್ನೂ ಒಂದೊಂದು ಟಗರನ್ನೂ ಬಲಿಪೀಠದ ಮೇಲೆ ಅರ್ಪಿಸಿದರು.</verse>
				<verse number="3">ಆಗ ಬಿಳಾಮನು ಬಾಲಾಕನಿಗೆ, “ನೀನು ನಿನ್ನ ದಹನಬಲಿಯ ಹತ್ತಿರ ನಿಂತುಕೋ, ನಾನು ಸ್ವಲ್ಪ ದೂರಹೋಗಿ ಬರುತ್ತೇನೆ. ಯೆಹೋವ ದೇವರು ನನಗೆ ದರ್ಶನ ಕೊಡಬಹುದು, ಅವರು ನನಗೆ ಸೂಚಿಸುವ ಸಂಗತಿಗಳನ್ನು ನಿನಗೆ ತಿಳಿಸುವೆನು,” ಎಂದು ಹೇಳಿ, ಒಂದು ಎತ್ತರವಾದ ಸ್ಥಳಕ್ಕೆ ಹೋದನು.</verse>
				<verse number="4">ಆಗ ದೇವರು ಬಿಳಾಮನನ್ನು ಸಂಧಿಸಿದರು. ಬಿಳಾಮನು ಅವರಿಗೆ, “ನಾನು ಏಳು ಬಲಿಪೀಠಗಳನ್ನು ಸಿದ್ಧಮಾಡಿ, ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದ್ದೇನೆ,” ಎಂದನು.</verse>
				<verse number="5">ಯೆಹೋವ ದೇವರು ಬಿಳಾಮನ ಬಾಯಲ್ಲಿ ತನ್ನ ಮಾತನ್ನು ಇಟ್ಟು ಅವನಿಗೆ, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ, ನಾನು ಹೇಳಿದ್ದನ್ನು ತಿಳಿಸು,” ಎಂದರು.</verse>
				<verse number="6">ಆಗ ಅವನು ಬಾಲಾಕನ ಬಳಿಗೆ ತಿರುಗಿಬಂದನು. ಬಾಲಾಕನೂ ಮೋವಾಬಿನ ಸಕಲ ಪ್ರಭುಗಳೂ ಅವನು ಮಾಡಿದ ದಹನಬಲಿಯ ಹತ್ತಿರ ನಿಂತಿದ್ದರು.</verse>
				<verse number="7">ಆಗ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಬಾಲಾಕನು ನನ್ನನ್ನು ಅರಾಮಿನಿಂದಲೂ, ಮೋವಾಬಿನ ಅರಸನು ಪೂರ್ವ ಪರ್ವತಗಳಿಂದಲೂ ಕರೆಯಿಸಿ, ‘ನನಗೋಸ್ಕರ ಯಾಕೋಬನನ್ನು ಶಪಿಸಿ ಬಾ, ಇಸ್ರಾಯೇಲನ್ನು ಎದುರಿಸುವುದಕ್ಕೆ ಬಾ,’ ಎಂದು ನನಗೆ ಹೇಳಿದ್ದಾನೆ.</verse>
				<verse number="8">ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಯೆಹೋವ ದೇವರು ಎದುರಿಸದವನನ್ನು ನಾನು ಹೇಗೆ ಎದುರಿಸಲಿ?</verse>
				<verse number="9">ಬೆಟ್ಟಗಳ ತುದಿಯಿಂದ ಅವರನ್ನು ನೋಡುತ್ತೇನೆ. ಎತ್ತರದ ಗುಡ್ಡಗಳಿಂದ ಅವರನ್ನು ದೃಷ್ಟಿಸಿದ್ದೇನೆ. ನಾನು ಆ ಪ್ರತ್ಯೇಕವಾಗಿ ವಾಸಿಸುವ ಜನರನ್ನು ನೋಡುತ್ತೇನೆ. ಆ ಜನಾಂಗವು ತಾನು ಇತರ ಜನಾಂಗಗಳಂತೆ ಸಾಧಾರಣವೆಂದು ಎಣಿಸುವುದಿಲ್ಲ.</verse>
				<verse number="10">ಧೂಳಿನಷ್ಟು ಅಸಂಖ್ಯವಾದ ಯಾಕೋಬರನ್ನು ಎಣಿಸುವುದಕ್ಕೂ, ಇಸ್ರಾಯೇಲಿನ ನಾಲ್ಕನೆಯ ಒಂದು ಪಾಲನ್ನು ಲೆಕ್ಕ ಮಾಡುವುದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು. ನನ್ನ ಅಂತ್ಯವು ಅವರಂತೆಯೇ ಆಗಲಿ.”</verse>
				<verse number="11">ಆಗ ಬಾಲಾಕನು ಬಿಳಾಮನಿಗೆ, “ಇದೇನು ನೀನು ನನಗೆ ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಯಿಸಿದೆನು, ನೀನು ಅವರನ್ನು ಶಪಿಸದೆ ಸಂಪೂರ್ಣವಾಗಿ ಆಶೀರ್ವದಿಸಿದೆ,” ಎಂದನು.</verse>
				<verse number="12">ಅದಕ್ಕೆ ಅವನು ಉತ್ತರವಾಗಿ, “ಯೆಹೋವ ದೇವರು ನನ್ನ ಬಾಯಿಯೊಳಗೆ ಇಡುವ ಮಾತನ್ನೇ ನಾನು ನುಡಿಯಬೇಕಲ್ಲವೇ?” ಎಂದನು.</verse>
				<verse number="13">ಬಾಲಾಕನು ಅವನಿಗೆ, “ನೀನು ಅವರನ್ನು ನೋಡತಕ್ಕ ಮತ್ತೊಂದು ಸ್ಥಳಕ್ಕೆ ನನ್ನೊಂದಿಗೆ ಬಾ, ಅವರನ್ನೆಲ್ಲಾ ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವೆ. ಅಲ್ಲಿಂದ ಅವರನ್ನು ನನಗೋಸ್ಕರ ಶಪಿಸು,” ಎಂದನು.</verse>
				<verse number="14">ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾದ ತುದಿಗೆ ಚೋಫೀಮ್ ಬಯಲಿಗೆ ಕರೆದುಕೊಂಡು ಹೋಗಿ ಏಳು ಬಲಿಪೀಠಗಳನ್ನು ಕಟ್ಟಿ ಒಂದೊಂದು ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದನು.</verse>
				<verse number="15">ಆಗ ಅವನು ಬಾಲಾಕನಿಗೆ, “ಇಲ್ಲಿ ನಿನ್ನ ದಹನಬಲಿಯ ಹತ್ತಿರ ನಿಂತುಕೋ. ನಾನು ಅಲ್ಲಿ ಯೆಹೋವ ದೇವರನ್ನು ಎದುರುಗೊಳ್ಳುವೆನು,” ಎಂದನು.</verse>
				<verse number="16">ಆಗ ಯೆಹೋವ ದೇವರು ಬಿಳಾಮನ ಎದುರಿಗೆ ಬಂದು ಅವನ ಬಾಯಿಯೊಳಗೆ ವಾಕ್ಯವನ್ನಿಟ್ಟು, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ನಾನು ಹೇಳಿದಂತೆಯೇ ತಿಳಿಸು,” ಎಂದರು.</verse>
				<verse number="17">ಅವನ ಸಂಗಡ ಮೋವಾಬಿನ ಪ್ರಧಾನರೂ ಅವನ ದಹನಬಲಿಯ ಹತ್ತಿರ ನಿಂತುಕೊಂಡಿದ್ದರು. ಬಾಲಾಕನು ಅವನಿಗೆ, “ಯೆಹೋವ ದೇವರು ಏನು ಹೇಳಿದ್ದಾರೆ,” ಎಂದನು.</verse>
				<verse number="18">ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಬಾಲಾಕನೇ, ಎದ್ದು ಕೇಳು; ಚಿಪ್ಪೋರನ ಮಗನೇ, ನನಗೆ ಕಿವಿಗೊಡು.</verse>
				<verse number="19">ದೇವರು ಮನುಷ್ಯನಂತೆ ಸುಳ್ಳಾಡುವವರಲ್ಲ. ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಅವರು ನುಡಿದದ್ದನ್ನು ಮಾಡದಿರುವರೇ? ವಾಗ್ದಾನ ಮಾಡಿದ್ದನ್ನು ಅವರು ನೆರವೇರಿಸದಿರುವರೇ?</verse>
				<verse number="20">ಆಶೀರ್ವದಿಸುವುದಕ್ಕೆ ನಾನು ಅಪ್ಪಣೆ ಹೊಂದಿದ್ದೇನೆ. ಅವರು ಆಶೀರ್ವದಿಸಿದ ನಂತರ ನಾನು ಅದನ್ನು ಬದಲಾಯಿಸಲಾರೆನು.</verse>
				<verse number="21">“ಯೆಹೋವ ದೇವರು ಯಾಕೋಬನಲ್ಲಿ ಆಪತ್ತನ್ನು ಕಾಣಲಿಲ್ಲ. ಇಸ್ರಾಯೇಲಿನಲ್ಲಿ ವಿಪತ್ತನ್ನು ನೋಡಲಿಲ್ಲ. ಅವರ ದೇವರಾದ ಯೆಹೋವ ದೇವರು ಅವರ ಸಂಗಡ ಇದ್ದಾರೆ. ಅರಸನ ಜಯಧ್ವನಿಯು ಅವರಲ್ಲಿ ಉಂಟು.</verse>
				<verse number="22">ದೇವರು ಅವರನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ್ದಾರೆ. ಅವರಿಗೆ ಕಾಡುಕೋಣದಂಥ ಬಲವುಂಟು.</verse>
				<verse number="23">ನಿಶ್ಚಯವಾಗಿ ಯಾಕೋಬನಲ್ಲಿ ಕಣಿಕೇಳುವದು ಇಲ್ಲ. ಇಸ್ರಾಯೇಲರಲ್ಲಿ ಶಕುನನೋಡುವದು ಇಲ್ಲ. ‘ನೋಡಿರಿ, ದೇವರು ಎಂತಹ ಮಹತ್ಕಾರ್ಯವನ್ನು ಮಾಡಿದ್ದಾರೆ,’ ಎಂದು ಯಾಕೋಬನ ವಿಷಯವಾಗಿಯೂ, ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು.</verse>
				<verse number="24">ಇಗೋ, ಜನಾಂಗವು ದೊಡ್ಡ ಸಿಂಹದ ಹಾಗೆ ಏಳುವುದು. ಸಿಂಹದ ಮರಿಯ ಹಾಗೆ ಎದ್ದೇಳುವುದು. ಅದು ಬೇಟೆಯನ್ನು ತಿಂದು, ಹತರಾದವರ ರಕ್ತವನ್ನು ಕುಡಿಯುವವರೆಗೆ ಮಲಗದು.”</verse>
				<verse number="25">ಆಗ ಬಾಲಾಕನು ಬಿಳಾಮನಿಗೆ, “ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ,” ಎಂದನು.</verse>
				<verse number="26">ಆದರೆ ಬಿಳಾಮನು ಉತ್ತರವಾಗಿ, “ಬಾಲಾಕನಿಗೆ ಯೆಹೋವ ದೇವರು ಹೇಳುವುದನ್ನೆಲ್ಲಾ ನಾನು ಮಾಡುವೆನೆಂದು ನಿನಗೆ ಹೇಳಲಿಲ್ಲವೋ?” ಎಂದನು.</verse>
				<verse number="27">ಆಗ ಬಾಲಾಕನು ಬಿಳಾಮನಿಗೆ, “ದಯಮಾಡಿ ಬಾ, ನಾನು ನಿನ್ನನ್ನು ಬೇರೆ ಒಂದು ಸ್ಥಳಕ್ಕೆ ಕರೆದುಕೊಂಡು ಹೋಗುವೆನು. ನೀನು ಅಲ್ಲಿಂದ ನನಗೋಸ್ಕರ ಅವರನ್ನು ಶಪಿಸುವುದು ಒಂದು ವೇಳೆ ದೇವರಿಗೆ ಯುಕ್ತವಾಗಿದ್ದೀತು,” ಎಂದನು.</verse>
				<verse number="28">ಆದಕಾರಣ ಬಾಲಾಕನು ಬಿಳಾಮನನ್ನು ಕಾಡಿಗೆದುರಾಗಿರುವ ಪೆಯೋರಿಯ ತುದಿಗೆ ಕರೆದುಕೊಂಡು ಹೋದನು.</verse>
				<verse number="29">ಬಿಳಾಮನು ಬಾಲಾಕನಿಗೆ, “ನನಗೆ ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿ, ಇಲ್ಲಿ ನನಗೆ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಸಿದ್ಧಮಾಡು,” ಎಂದನು.</verse>
				<verse number="30">ಬಿಳಾಮನು ಹೇಳಿದ ಪ್ರಕಾರ ಬಾಲಾಕನು ಮಾಡಿ, ಬಲಿಪೀಠದ ಮೇಲೆ ಒಂದೊಂದು ಹೋರಿಯನ್ನೂ, ಒಂದೊಂದು ಟಗರನ್ನೂ ಅರ್ಪಿಸಿದನು.</verse>
			</chapter>
			<chapter number="24">
				<verse number="1">ಆದರೆ ಇಸ್ರಾಯೇಲನ್ನು ಆಶೀರ್ವದಿಸುವುದಕ್ಕೆ ಯೆಹೋವ ದೇವರ ದೃಷ್ಟಿಗೆ ಒಳ್ಳೆಯದೆಂದು ಬಿಳಾಮನು ನೋಡಿದಾಗ, ಅವನು ಮುಂಚಿನ ಹಾಗೆ ಶಕುನವನ್ನು ಕಂಡುಕೊಳ್ಳುವುದಕ್ಕೆ ಹೋಗದೆ, ತನ್ನ ಮುಖವನ್ನು ಮರುಭೂಮಿಯ ಕಡೆಗೆ ತಿರುಗಿಸಿಕೊಂಡನು.</verse>
				<verse number="2">ಬಿಳಾಮನು ತನ್ನ ಕಣ್ಣೆತ್ತಿ ಇಸ್ರಾಯೇಲರು ಅವರವರ ಗೋತ್ರಗಳ ಪ್ರಕಾರ ತಮ್ಮ ಡೇರೆಗಳಲ್ಲಿ ವಾಸವಾಗಿರುವುದನ್ನು ನೋಡಿದಾಗ, ದೇವರಾತ್ಮ ಪ್ರೇರಿತನಾಗಿ</verse>
				<verse number="3">ಹೀಗೆ ಪ್ರವಾದಿಸಿದನು: “ಇದು ಬೆಯೋರನ ಮಗ ಬಿಳಾಮನ ಪ್ರವಾದನೆ: ಸ್ಪಷ್ಟ ಕಣ್ಣುಳ್ಳವನು ನುಡಿದದ್ದು.</verse>
				<verse number="4">ದೇವರ ಮಾತುಗಳನ್ನು ಕೇಳಿದವನೂ, ಸರ್ವಶಕ್ತರ ದರ್ಶನವನ್ನು ನೋಡಿದವನೂ, ಪರವಶನಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು:</verse>
				<verse number="5">“ಯಾಕೋಬೇ, ನಿನ್ನ ಡೇರೆಗಳೂ; ಇಸ್ರಾಯೇಲರೇ, ನಿಮ್ಮ ಗುಡಾರಗಳೂ ಉತ್ತಮವಾಗಿವೆ!</verse>
				<verse number="6">“ಅವು ಕಣಿವೆಗಳ ಹಾಗೆ ವಿಸ್ತರಿಸಿವೆ. ನದಿತೀರದಲ್ಲಿರುವ ತೋಟಗಳ ಹಾಗೆಯೂ, ಯೆಹೋವ ದೇವರು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿಯಲ್ಲಿರುವ ದೇವದಾರುಗಳ ಹಾಗೆಯೂ ಇರುತ್ತವೆ.</verse>
				<verse number="7">ಅವರ ತೊಟ್ಟಿಗಳಿಂದ ನೀರು ಹರಿಯುವಂತೆ ಮಾಡುವರು. ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು. “ಅವರ ಅರಸನು ಅಗಾಗ್ ರಾಜನಿಗಿಂತಲೂ ಉನ್ನತವಾಗಿರುವನು. ಅವರ ರಾಜ್ಯವು ಅಭಿವೃದ್ಧಿ ಹೊಂದುವುದು.</verse>
				<verse number="8">“ದೇವರು ಅವರನ್ನು ಈಜಿಪ್ಟಿನಿಂದ ಹೊರಗೆ ತಂದನು. ಈ ಕಾಡುಕೋಣದಂತೆ ಬಲ ಅವರಿಗೆ ಉಂಟು. ಅವರು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು, ಅವರ ಎಲುಬುಗಳನ್ನು ಚೂರುಮಾಡಿ, ತಮ್ಮ ಬಾಣಗಳಿಂದ ಗಾಯಮಾಡುವನು.</verse>
				<verse number="9">ಅವರು ಸಿಂಹದ ಹಾಗೆಯೂ, ಸಿಂಹಣಿ ಹಾಗೆಯೂ ಬಾಗಿ ಮಲಗುತ್ತಾನೆ. ಅವನನ್ನು ಎಬ್ಬಿಸುವವನು ಯಾರು? “ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದ ಉಂಟಾಗಲಿ. ಶಪಿಸುವವನಿಗೆ ಶಾಪ ಉಂಟಾಗಲಿ.”</verse>
				<verse number="10">ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು, ಚಪ್ಪಾಳೆ ಹೊಡೆದು ಬಿಳಾಮನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಈ ಮೂರು ಸಾರಿಯೂ ಆಶೀರ್ವದಿಸಿದೆ.</verse>
				<verse number="11">ಈಗ ನಿನ್ನ ಸ್ಥಳಕ್ಕೆ ಓಡಿಹೋಗು. ನಾನು ನಿನ್ನನ್ನು ಬಹು ಗೌರವಿಸಬೇಕೆಂದಿದ್ದೆ. ಆದರೆ ಇಗೋ, ಯೆಹೋವ ದೇವರು ನಿನಗೆ ಘನತೆ ಬಾರದಂತೆ ತಡೆದಿದ್ದಾನೆ,” ಎಂದನು.</verse>
				<verse number="12">ಬಿಳಾಮನು ಬಾಲಾಕನಿಗೆ, “ನೀನು ನನ್ನ ಬಳಿಗೆ ಕಳುಹಿಸಿದ ದೂತರಿಗೆ,</verse>
				<verse number="13">‘ಬಾಲಾಕನು ನನಗೆ ತನ್ನ ಮನೆ ತುಂಬ ಬೆಳ್ಳಿಬಂಗಾರಗಳನ್ನು ಕೊಟ್ಟರೂ, ನನ್ನ ಹೃದಯದಿಂದ ಒಳ್ಳೆಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡುವುದಕ್ಕೆ ಯೆಹೋವ ದೇವರ ಆಜ್ಞೆಯನ್ನು ಮೀರಲಾರೆನು. ಯೆಹೋವ ದೇವರು ಏನು ಹೇಳುತ್ತಾರೋ, ಅದನ್ನೇ ಹೇಳುವೆನೆಂದು ನಾನು ಹೇಳಲಿಲ್ಲವೋ’? ಈಗ, ನನ್ನ ಜನರ ಬಳಿಗೆ ಹೋಗುತ್ತೇನೆ.</verse>
				<verse number="14">ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ, ಅದನ್ನು ನಿನಗೆ ತಿಳಿಸುವೆನು,” ಎಂದನು.</verse>
				<verse number="15">ಆಗ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಬೆಯೋರನ ಮಗ ಬಿಳಾಮನು ಹೇಳಿದ್ದು: ಸ್ಪಷ್ಟ ಕಣ್ಣುಳ್ಳ ಮನುಷ್ಯನು ನುಡಿದದ್ದು.</verse>
				<verse number="16">ದೇವರ ಮಾತುಗಳನ್ನು ಕೇಳಿದವನೂ, ಮಹೋನ್ನತನ ಜ್ಞಾನವನ್ನು ತಿಳಿದವನೂ, ಸರ್ವಶಕ್ತರ ದರ್ಶನವನ್ನು ನೋಡಿದವನೂ, ಪರವಶನಾಗಿದ್ದು ತೆರೆದ ಕಣ್ಣುಳ್ಳವನೂ ಹೇಳಿದ್ದು:</verse>
				<verse number="17">“ನಾನು ಅವನನ್ನು ನೋಡುವೆನು, ಈಗಲ್ಲ. ಅವನನ್ನು ದೃಷ್ಟಿಸುವೆನು, ಸಮೀಪದಲ್ಲಿ ಅಲ್ಲ. ಯಾಕೋಬನಿಂದ ನಕ್ಷತ್ರ ಉದಯಿಸುವುದು. ಇಸ್ರಾಯೇಲನಿಂದ ರಾಜದಂಡ ಏಳುವುದು. ಅದು ಮೋವಾಬಿನ ಮೂಲೆಗಳನ್ನು ಹೊಡೆದು, ಸೇಥನ ಎಲ್ಲಾ ಮಕ್ಕಳನ್ನು ಸಂಹರಿಸುವುದು.</verse>
				<verse number="18">ಎದೋಮು ಸ್ವಾಧೀನವಾಗುವುದು; ಸೇಯೀರನವರು ತನ್ನ ಶತ್ರುಗಳಿಗೆ ಸ್ವಾಧೀನವಾಗುವುದು; ಇಸ್ರಾಯೇಲು ಪರಾಕ್ರಮ ಕಾರ್ಯಮಾಡುವುದು,</verse>
				<verse number="19">ಯಾಕೋಬನೊಳಗಿಂದ ಒಬ್ಬನು ಬಂದು ಆಳುವನು, ಅವನು ಪಟ್ಟಣದಲ್ಲಿ ಉಳಿದದ್ದನ್ನು ನಾಶಮಾಡುವನು.”</verse>
				<verse number="20">ಅನಂತರ ಬಿಳಾಮನು ಅಮಾಲೇಕ್ಯರನ್ನು ನೋಡಿ ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಜನಾಂಗಗಳಲ್ಲಿ ಮೊದಲನೆಯವನೇ ಅಮಾಲೇಕ್ಯನು, ಆದರೆ ಅವನು ಕೊನೆಗೆ ನಾಶವಾಗುವನು.”</verse>
				<verse number="21">ಬಳಿಕ ಕೇನ್ಯರನ್ನು ಅವನು ನೋಡಿ ಪದ್ಯರೂಪವಾಗಿ ಹೇಳಿದ್ದೇನೆಂದರೆ: “ನಿನ್ನ ನಿವಾಸವು ಬಲವಾಗಿದೆ. ನಿನ್ನ ಗೂಡನ್ನು ಬಂಡೆಯಲ್ಲಿ ಹಾಕಿದಿ.</verse>
				<verse number="22">ಆದರೂ ಅಸ್ಸೀರಿಯರು ನಿನ್ನನ್ನು ಸೆರೆಹಿಡಿಯುವಷ್ಟರಲ್ಲೇ ನೀವು ಕೇನ್ಯರೂ ಹಾಳಾಗುವರು.”</verse>
				<verse number="23">ಇದಲ್ಲದೆ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಅಯ್ಯೋ! ದೇವರು ಇದನ್ನು ಮಾಡುವಾಗ ಯಾರು ಬದುಕುವರು?</verse>
				<verse number="24">ಕಿತ್ತೀಮೆಂಬ ತೀರದಿಂದ ಹಡಗುಗಳು ಬಂದು, ಅಸ್ಸೀರಿಯರನ್ನೂ, ಏಬೆರ್ ಜನರನ್ನೂ ಸೋಲಿಸುವುವು. ಅವನು ಸಹ ಸದಾಕಾಲಕ್ಕೂ ನಾಶವಾಗುವನು.”</verse>
				<verse number="25">ಆಗ ಬಿಳಾಮನು ಎದ್ದು ತನ್ನ ಸ್ಥಳಕ್ಕೆ ತಿರುಗಿಹೋದನು. ಬಾಲಾಕನು ಸಹ ತನ್ನ ಮಾರ್ಗವಾಗಿ ಹೋದನು.</verse>
			</chapter>
			<chapter number="25">
				<verse number="1">ಆಗ ಇಸ್ರಾಯೇಲರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ, ಅವರು ಮೋವಾಬಿನ ಪುತ್ರಿಯರ ಸಂಗಡ ಜಾರತ್ವ ಮಾಡಲಾರಂಭಿಸಿದರು.</verse>
				<verse number="2">ಆ ಮಹಿಳೆಯರು ಇಸ್ರಾಯೇಲರನ್ನು ತಮ್ಮ ದೇವರುಗಳ ಬಲಿಗಳಿಗೆ ಕರೆದರು. ಇವರು ತಿಂದು ಅವರ ದೇವರುಗಳಿಗೆ ಅಡ್ಡಬಿದ್ದರು.</verse>
				<verse number="3">ಹೀಗೆ ಇಸ್ರಾಯೇಲರು ಬಾಳ್ ಪೆಯೋರಿನೊಂದಿಗೆ ತಾವೇ ಕೂಡಿ ಪೂಜಿಸಿದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಕೋಪಗೊಂಡರು.</verse>
				<verse number="4">ಆಗ ಯೆಹೋವ ದೇವರು ಮೋಶೆಗೆ, “ಯೆಹೋವ ದೇವರ ಕೋಪಾಗ್ನಿಯು ಇಸ್ರಾಯೇಲಿನಿಂದ ತಿರುಗಿಕೊಳ್ಳುವ ಹಾಗೆ ನೀನು ಜನರ ಮುಖ್ಯಸ್ಥರೆಲ್ಲರನ್ನು ತೆಗೆದುಕೊಂಡು, ಅವರನ್ನು ಹಗಲು ಹೊತ್ತಿನಲ್ಲಿ ಯೆಹೋವ ದೇವರ ಮುಂದೆ ಕೊಂದುಹಾಕು.”</verse>
				<verse number="5">ಆದ್ದರಿಂದ ಮೋಶೆ ಇಸ್ರಾಯೇಲಿನ ನ್ಯಾಯಾಧಿಪತಿಗಳಿಗೆ, “ನಿಮ್ಮಲ್ಲಿ ಒಬ್ಬೊಬ್ಬನೂ ಬಾಳ್ ಪೆಯೋರಿನೊಂದಿಗೆ ಕೂಡಿ ಪೂಜಿಸಿರುವ ನಿನ್ನ ಜನರನ್ನು ಕೊಲ್ಲಬೇಕು,” ಎಂದನು.</verse>
				<verse number="6">ಆಗ ಇಸ್ರಾಯೇಲರಲ್ಲಿ ಒಬ್ಬನು ಮೋಶೆಗೆ ಹಾಗೂ ದೇವದರ್ಶನ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲರ ಸಮಸ್ತ ಸಮೂಹಕ್ಕೂ ಕಾಣುವ ಹಾಗೆ ಒಬ್ಬ ಮಿದ್ಯಾನ್ ಮಹಿಳೆಯನ್ನು ಕರೆತಂದನು.</verse>
				<verse number="7">ಕೂಡಲೆ ಮಾಹಾಯಾಜಕ ಆರೋನನ ಮಗನಾಗಿದ್ದ ಎಲಿಯಾಜರನ ಮಗ ಫೀನೆಹಾಸನು ಅದನ್ನು ನೋಡಿ, ಜನರ ಮಧ್ಯದಿಂದ ಎದ್ದು, ತನ್ನ ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು,</verse>
				<verse number="8">ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ, ಇಸ್ರಾಯೇಲಿನವನನ್ನೂ ಆ ಮಹಿಳೆಯನ್ನೂ ಒಂದೇ ಬಾರಿಗೆ ಇಬ್ಬರ ಹೊಟ್ಟೆಯನ್ನು ತಿವಿದನು. ಹೀಗೆ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.</verse>
				<verse number="9">ಆದರೂ, ವ್ಯಾಧಿಯಿಂದ ಸತ್ತವರು 24,000 ಮಂದಿಯಾಗಿದ್ದರು.</verse>
				<verse number="10">ಯೆಹೋವ ದೇವರು ಮೋಶೆಗೆ,</verse>
				<verse number="11">“ಯಾಜಕನಾದ ಆರೋನನ ಮೊಮ್ಮಗನೂ, ಎಲಿಯಾಜರನ ಮಗ ಫೀನೆಹಾಸನು ಇಸ್ರಾಯೇಲರಲ್ಲಿ ನನಗೋಸ್ಕರ ಆಸಕ್ತನಾಗಿದ್ದು, ನಾನು ನನ್ನ ರೋಷದಿಂದ ಅವರನ್ನು ನಾಶಮಾಡದ ಹಾಗೆ, ನನ್ನ ಕೋಪವನ್ನು ಅವರ ಮೇಲಿನಿಂದ ತಿರುಗಿಸಿಬಿಟ್ಟಿದ್ದಾನೆ.</verse>
				<verse number="12">ಆದಕಾರಣ, ನಾನು ಅವನೊಂದಿಗೆ ನನ್ನ ಸಮಾಧಾನದ ಒಡಂಬಡಿಕೆಯನ್ನು ಮಾಡುತ್ತೇನೆ ಎಂದು ಹೇಳು.</verse>
				<verse number="13">ಅವನು ತನ್ನ ದೇವರ ಗೌರವವನ್ನು ಕಾಪಾಡಲು ಆಸಕ್ತನಾಗಿದ್ದು, ಇಸ್ರಾಯೇಲರಿಗೋಸ್ಕರ ಪಾಪ ಪ್ರಾಯಶ್ಚಿತ್ತ ಮಾಡಿದ್ದರಿಂದ, ಅವನಿಗೂ ಅವನ ಹಿಂದೆ ಬರುವ ಅವನ ಸಂತತಿಗೂ ನಿತ್ಯ ಯಾಜಕತ್ವದ ಒಡಂಬಡಿಕೆ ಮಾಡಿದ್ದೇನೆ,” ಎಂದರು.</verse>
				<verse number="14">ಮಿದ್ಯಾನ್ ಸ್ತ್ರೀಯ ಸಂಗಡ ಹತನಾದ ಆ ಇಸ್ರಾಯೇಲಿನವನ ಹೆಸರು ಜಿಮ್ರಿ, ಅವನು ಸಿಮೆಯೋನ್ ಕುಲದವರಲ್ಲಿ ಗೋತ್ರದ ಮುಖ್ಯಸ್ಥನಾಗಿದ್ದ ಸಾಲೂ ಎಂಬುವನ ಮಗನು.</verse>
				<verse number="15">ಹತಳಾದ ಆ ಮಿದ್ಯಾನ್ ಸ್ತ್ರೀಯ ಹೆಸರು ಕೊಜ್ಬೀ, ಅವಳು ಮಿದ್ಯಾನ್ಯರ ಪ್ರಜೆಯ ಮುಖ್ಯಸ್ಥನೂ ಮನೆಗೆ ಯಜಮಾನನೂ ಆಗಿರುವ ಚೂರ್ ಎಂಬವನ ಮಗಳಾಗಿದ್ದಳು.</verse>
				<verse number="16">ಯೆಹೋವ ದೇವರು ಮೋಶೆಗೆ,</verse>
				<verse number="17">“ಮಿದ್ಯಾನ್ಯರನ್ನು ವೈರಿ ಎಂದು ತಿಳಿದು ಹೊಡೆಯಬೇಕು.</verse>
				<verse number="18">ಅವರು ಪೆಯೋರಿನ ವಿಷಯದಲ್ಲಿಯೂ, ಪೆಯೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಹತಳಾದ ತಮ್ಮ ಸಹೋದರಿಯಾಗಿಯೂ, ಮಿದ್ಯಾನ್ಯರ ಪ್ರಧಾನನ ಮಗಳಾಗಿಯೂ, ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರವ ಕೊಡುತ್ತಾರೆ,” ಎಂದರು.</verse>
			</chapter>
			<chapter number="26">
				<verse number="1">ವ್ಯಾಧಿಯ ತರುವಾಯ ಯೆಹೋವ ದೇವರು ಮೋಶೆಗೂ, ಆರೋನನ ಮಗನೂ, ಯಾಜಕನೂ ಆಗಿರುವ ಎಲಿಯಾಜರನ ಸಂಗಡ ಮಾತನಾಡಿ,</verse>
				<verse number="2">“ಇಸ್ರಾಯೇಲರ ಸಮಸ್ತ ಸಮೂಹದವರಲ್ಲಿ ಇಪ್ಪತ್ತು ವರ್ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರನ್ನು ಯುದ್ಧಕ್ಕೆ ಹೋಗುವುದಕ್ಕೆ ಶಕ್ತರಾದವರೆಲ್ಲರನ್ನು ಜನಗಣತಿ ಮಾಡಿ ಅವರ ಗೋತ್ರಗಳ ಪ್ರಕಾರ ತೆಗೆದುಕೊಳ್ಳಿರಿ,” ಎಂದರು.</verse>
				<verse number="3">ಆಗ ಮೋಶೆಯೂ ಯಾಜಕನಾದ ಎಲಿಯಾಜರನೂ ಮೋವಾಬಿನ ಬಯಲುಗಳಲ್ಲಿ ಯೆರಿಕೋವಿಗೆದುರಾಗಿ ಯೊರ್ದನಿನ ಹತ್ತಿರ ಅವರ ಸಂಗಡ ಮಾತನಾಡಿ,</verse>
				<verse number="4">“ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ, ಇಪ್ಪತ್ತು ವರ್ಷದವರನ್ನೂ ಅದಕ್ಕೆ ಅಧಿಕವಾದ ಪ್ರಾಯವುಳ್ಳವರನ್ನೂ ಎಣಿಸಬೇಕು.” ಈಜಿಪ್ಟ್ ದೇಶದಿಂದ ಹೊರಟು ಬಂದಿದ್ದ ಇಸ್ರಾಯೇಲರು ಇವರು:</verse>
				<verse number="5">ಇಸ್ರಾಯೇಲನ ಚೊಚ್ಚಲ ಮಗ ರೂಬೇನನೂ, ರೂಬೇನನ ಮಕ್ಕಳೂ; ಹನೋಕನೂ, ಇವನಿಂದ ಹನೋಕ್ಯರ ಕುಟುಂಬ; ಪಲ್ಲೂವಿನಿಂದ ಪಲ್ಲೂವಿಯರ ಕುಟುಂಬ;</verse>
				<verse number="6">ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ; ಕರ್ಮೀಯಿಂದ ಕರ್ಮೀಯರ ಕುಟುಂಬ.</verse>
				<verse number="7">ಇವೇ ರೂಬೇನ್ಯರ ಕುಟುಂಬಗಳು. ಇವರಲ್ಲಿ ಎಣಿಕೆಯಾದವರ ಸಂಖ್ಯೆ 43,730 ಪುರುಷರು.</verse>
				<verse number="8">ಪಲ್ಲೂವಿನ ಪುತ್ರ ಎಲೀಯಾಬನು.</verse>
				<verse number="9">ಎಲೀಯಾಬನ ಪುತ್ರರು ನೆಮೂಯೇಲ್, ದಾತಾನ್, ಅಬೀರಾಮ್. ಈ ದಾತಾನನೂ, ಅಬೀರಾಮನೂ ಜನರಲ್ಲಿ ಪ್ರಸಿದ್ಧರಾಗಿದ್ದು; ಕೋರಹನ ಗುಂಪಿನಲ್ಲಿದ್ದು; ಯೆಹೋವ ದೇವರಿಗೂ ಮೋಶೆ ಆರೋನರಿಗೂ ವಿರೋಧವಾಗಿ ಹೋರಾಡಿದರು.</verse>
				<verse number="10">ಭೂಮಿಯು ತನ್ನ ಬಾಯಿಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು. ಹಾಗೆಯೇ ಆ ಗುಂಪಿನವರಲ್ಲಿ ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು. ಹೀಗೆ ಇಸ್ರಾಯೇಲರಿಗೆ ಎಚ್ಚರಿಕೆ ಉಂಟಾಗುವಂತೆ ಮಾಡಿತು. ಅವರು ದೃಷ್ಟಾಂತವಾದರು.</verse>
				<verse number="11">ಆದರೂ ಕೋರಹನ ಮಕ್ಕಳು ಸಾಯಲಿಲ್ಲ.</verse>
				<verse number="12">ಕುಟುಂಬಗಳ ಪ್ರಕಾರ ಸಿಮೆಯೋನನ ಪುತ್ರರು. ನೆಮೂಯೇಲನಿಂದ ನೆಮೂಯೇಲ್ಯರ ಕುಟುಂಬ; ಯಾಮೀನನಿಂದ ಯಾಮೀನ್ಯರ ಕುಟುಂಬ; ಯಾಕೀನನಿಂದ ಯಾಕೀನ್ಯರ ಕುಟುಂಬ;</verse>
				<verse number="13">ಜೆರಹನ ವಂಶಸ್ಥರಾದ ಜೆರಹಿಯರು, ಸೌಲನಿಂದ ಸೌಲ್ಯರ ಕುಟುಂಬ;</verse>
				<verse number="14">ಸಿಮೆಯೋನ್ ಕುಲದವರಾದ ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 22,200 ಪುರುಷರು.</verse>
				<verse number="15">ಕುಟುಂಬಗಳ ಪ್ರಕಾರ ಗಾದನ ಮಕ್ಕಳು: ಚೆಫೋನನ ವಂಶಸ್ಥರಾದ ಚೆಫೋನ್ಯರು, ಹಗ್ಗೀಯಿಂದ ಹಗ್ಗೀಯರ ಕುಟುಂಬ ಶೂನೀಯಿಂದ ಶೂನೀಯರ ಕುಟುಂಬ;</verse>
				<verse number="16">ಒಜ್ನೀಯ ವಂಶಸ್ಥರಾದ ಒಜ್ನೀಯರು, ಏರೀಯ ವಂಶಸ್ಥರಾದ ಏರೀಯರು,</verse>
				<verse number="17">ಅರೋದನಿಂದ ಅರೋದ್ಯರ ಕುಟುಂಬ; ಅರೇಲೀಯಿಂದ ಅರೇಲೀಯರ ಕುಟುಂಬ.</verse>
				<verse number="18">ಗಾದನ ಮಕ್ಕಳ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 40,500 ಪುರುಷರು.</verse>
				<verse number="19">ಯೆಹೂದನ ಪುತ್ರರು: ಏರ್, ಓನಾನನೂ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು.</verse>
				<verse number="20">ಕುಟುಂಬಗಳ ಪ್ರಕಾರ ಯೆಹೂದನ ಪುತ್ರರು. ಶೇಲಹನಿಂದ ಶೇಲಾನ್ಯರ ಕುಟುಂಬ; ಪೆರೆಚನಿಂದ ಪೆರೆಚ್ಯರ ಕುಟುಂಬ; ಜೆರಹನಿಂದ ಜೆರಹಿಯರ ಕುಟುಂಬ;</verse>
				<verse number="21">ಪೆರೆಚನ ಪುತ್ರರು, ಹೆಚ್ರೋನನಿಂದ ಹೆಚ್ರೋನ್ಯರ ಕುಟುಂಬ. ಹಾಮೂಲನಿಂದ ಹಾಮೂಲ್ಯರು ಕುಟುಂಬ</verse>
				<verse number="22">ಯೆಹೂದನ ಕುಟುಂಬಗಳಲ್ಲಿ ಲೆಕ್ಕಿತರಾದವರ ಸಂಖ್ಯೆ 76,500 ಪುರುಷರು.</verse>
				<verse number="23">ಕುಟುಂಬಗಳ ಪ್ರಕಾರ ಇಸ್ಸಾಕಾರನ ಪುತ್ರರು. ತೋಲನ ವಂಶಸ್ಥರಾದ ತೋಲಾಯರು, ಪುವ್ವನಿಂದ ಪೂನ್ಯರ ಕುಟುಂಬ;</verse>
				<verse number="24">ಯಾಶೂಬನಿಂದ ಯಾಶೂಬ್ಯರ ಕುಟುಂಬ; ಶಿಮ್ರೋನನಿಂದ ಶಿಮ್ರೋನ್ಯರ ಕುಟುಂಬ.</verse>
				<verse number="25">ಇಸ್ಸಾಕಾರನ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 64,300 ಪುರುಷರು.</verse>
				<verse number="26">ಜೆಬುಲೂನನ ಪುತ್ರರು: ಕುಟುಂಬಗಳ ಪ್ರಕಾರ ಸೆರೆದನಿಂದ ಸೆರೆದ್ಯರ ಕುಟುಂಬ; ಏಲೋನನ ವಂಶಸ್ಥರಾದ ಏಲೋನ್ಯರು, ಯಹಲೇಲನಿಂದ ಯಹಲೇಲ್ಯರ ಕುಟುಂಬ.</verse>
				<verse number="27">ಜೆಬುಲೂನ್ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 60,500 ಪುರುಷರು.</verse>
				<verse number="28">ಕುಟುಂಬಗಳ ಪ್ರಕಾರ ಯೋಸೇಫನ ಪುತ್ರರು: ಮನಸ್ಸೆ, ಎಫ್ರಾಯೀಮ್.</verse>
				<verse number="29">ಮನಸ್ಸೆಯ ಪುತ್ರರು: ಮಾಕೀರನಿಂದ ಮಾಕೀರ್ಯರ ಕುಟುಂಬ; ಮಾಕೀರನು ಗಿಲ್ಯಾದನನ್ನು ಪಡೆದನು. ಗಿಲ್ಯಾದನಿಂದ ಗಿಲ್ಯಾದ್ಯರ ಕುಟುಂಬ.</verse>
				<verse number="30">ಗಿಲ್ಯಾದನ ಪುತ್ರರು ಇವರೇ. ಈಯೆಜೆರನಿಂದ ಈಯೆಜೆರ್ಯರ ಕುಟುಂಬ; ಹೇಲೆಕನಿಂದ ಹೇಲೆಕ್ಯರ ಕುಟುಂಬ;</verse>
				<verse number="31">ಅಸ್ರೀಯೇಲನಿಂದ ಅಸ್ರೀಯೇಲ್ಯರ ಕುಟುಂಬ, ಶೆಕೆಮನಿಂದ ಶೆಕೆಮ್ಯರ ಕುಟುಂಬ;</verse>
				<verse number="32">ಶೆಮೀದಾಯನಿಂದ ಶೆಮೀದಾಯರ ಕುಟುಂಬ; ಹೇಫೆರನಿಂದ ಹೇಫೆರ್ಯರ ಕುಟುಂಬ.</verse>
				<verse number="33">ಹೇಫೆರನ ಮಗ ಚಲ್ಪಹಾದನಿಗೆ ಪುತ್ರರಿರಲಿಲ್ಲ. ಪುತ್ರಿಯರು ಇದ್ದರು. ಚಲ್ಪಹಾದನ ಪುತ್ರಿಯರ ಹೆಸರುಗಳು ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ.</verse>
				<verse number="34">ಮನಸ್ಸೆಯ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 52,700 ಪುರುಷರು.</verse>
				<verse number="35">ಕುಟುಂಬಗಳ ಪ್ರಕಾರ ಎಫ್ರಾಯೀಮನ ಪುತ್ರರು: ಶೂತೆಲಹನಿಂದ ಶೂತೆಲಹ್ಯರ ಕುಟುಂಬ; ಬೆಕೆರನಿಂದ ಬೆಕೆರ್ಯರ ಕುಟುಂಬ; ತಹನನಿಂದ ತಹನಿಯರ ಕುಟುಂಬ.</verse>
				<verse number="36">ಶೂತೆಲಹನ ಪುತ್ರರು: ಏರಾನನಿಂದ ಏರಾನ್ಯರ ಕುಟುಂಬ.</verse>
				<verse number="37">ಎಫ್ರಾಯೀಮನ ಪುತ್ರರ ಎಫ್ರಾಯೀಮನ ಪುತ್ರರುಗಳು ಇವೇ. ಅವರಲ್ಲಿ ಲೆಕ್ಕಿತರಾದವರ ಸಂಖ್ಯೆ 32,500. ಕುಟುಂಬಗಳ ಪ್ರಕಾರ ಯೋಸೇಫನ ಮಕ್ಕಳು ಇವರೇ.</verse>
				<verse number="38">ಕುಟುಂಬಗಳ ಪ್ರಕಾರ ಬೆನ್ಯಾಮೀನನ ಪುತ್ರರು: ಬೆಳಗನಿಂದ ಬೆಲಗ್ಯರ ಕುಟುಂಬ; ಅಷ್ಬೇಲನಿಂದ ಅಷ್ಬೇಲ್ಯರ ಕುಟುಂಬ; ಅಹೀರಾಮನಿಂದ ಅಹೀರಾಮ್ಯರ ಕುಟುಂಬ;</verse>
				<verse number="39">ಶೂಫಾಮನಿಂದ ಶೂಫಾಮ್ಯರ ಕುಟುಂಬ; ಹೂಫಾಮನಿಂದ ಹೂಫಾಮ್ಯರ ಕುಟುಂಬ.</verse>
				<verse number="40">ಬೆಳಗನ ಪುತ್ರರು ಆರ್ದನೂ ನಾಮಾನನೂ. ಅರ್ದನಿಂದ ಅರ್ದ್ಯರ ಕುಟುಂಬ; ನಾಮಾನನಿಂದ ನಾಮಾನ್ಯರ ಕುಟುಂಬ.</verse>
				<verse number="41">ಕುಟುಂಬಗಳ ಪ್ರಕಾರ ಬೆನ್ಯಾಮೀನನ ಪುತ್ರರು ಇವರೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 45,600.</verse>
				<verse number="42">ಕುಟುಂಬಗಳ ಪ್ರಕಾರ ದಾನನ ಪುತ್ರರು: ಶೂಹಾಮನಿಂದ ಶೂಹಾಮ್ಯರ ಕುಟುಂಬ; ಕುಟುಂಬಗಳ ಪ್ರಕಾರ ದಾನನ ಕುಟುಂಬಗಳು ಇವೇ.</verse>
				<verse number="43">ಶೂಹಾಮ್ಯರ ಸಮಸ್ತ ಕುಟುಂಬಗಳಲ್ಲಿ ಲೆಕ್ಕಿತರಾದವರ ಸಂಖ್ಯೆ 64,400.</verse>
				<verse number="44">ಕುಟುಂಬಗಳ ಪ್ರಕಾರ ಆಶೇರನ ಮಕ್ಕಳು: ಇಮ್ನಾಹನನಿಂದ ಇಮ್ನಾಹರ ಕುಟುಂಬ; ಇಷ್ವೀಯಿಂದ ಇಷ್ವೀಯರ ಕುಟುಂಬ; ಬೆರೀಯನಿಂದ ಬೆರೀಯರ ಕುಟುಂಬ.</verse>
				<verse number="45">ಬೆರೀಯನ ಕುಮಾರರು: ಹೆಬೆರನಿಂದ ಹೆಬೆರ್ಯರ ಕುಟುಂಬ; ಮಲ್ಕೀಯೇಲನಿಂದ ಮಲ್ಕೀಯೇಲ್ಯರ ಕುಟುಂಬ.</verse>
				<verse number="46">ಆಶೇರನ ಮಗಳ ಹೆಸರು ಸೆರಹ.</verse>
				<verse number="47">ಲೆಕ್ಕಾನುಸಾರವಾದ ಆಶೇರನ ಪುತ್ರರ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 53,400.</verse>
				<verse number="48">ಕುಟುಂಬಗಳ ಪ್ರಕಾರ ನಫ್ತಾಲಿಯ ಪುತ್ರರು: ಯಹಚೇಲನಿಂದ ಯಹಚೇಲ್ಯರ ಕುಟುಂಬ; ಗೂನೀಯ ವಂಶಸ್ಥರಾದ ಗೂನೀಯರು,</verse>
				<verse number="49">ಯೇಚೆರನಿಂದ ಯೇಚೆರ್ಯರ ಕುಟುಂಬ; ಶಿಲ್ಲೇಮನಿಂದ ಶಿಲ್ಲೇಮ್ಯರ ಕುಟುಂಬ.</verse>
				<verse number="50">ಕುಟುಂಬಗಳ ಪ್ರಕಾರ ನಫ್ತಾಲಿಯ ಕುಟುಂಬಗಳು ಇವೇ. ಇವರಲ್ಲಿ ಲೆಕ್ಕಿತರಾದವರು 45,400.</verse>
				<verse number="51">ಇಸ್ರಾಯೇಲರಲ್ಲಿ ಲೆಕ್ಕಿತರಾದವರ ಸಂಖ್ಯೆ 6,01,730.</verse>
				<verse number="52">ಯೆಹೋವ ದೇವರು ಮೋಶೆಗೆ,</verse>
				<verse number="53">“ಇವರಿಗೆ ನಾಡನ್ನು ಹೆಸರುಗಳ ಲೆಕ್ಕದ ಪ್ರಕಾರ ಸೊತ್ತಾಗಿ ಹಂಚಿಕೊಡು.</verse>
				<verse number="54">ಹೆಚ್ಚು ಮಂದಿಯುಳ್ಳ ಗೋತ್ರಕ್ಕೆ ಹೆಚ್ಚಾಗಿಯೂ ಕಡಿಮೆ ಮಂದಿಯುಳ್ಳ ಗೋತ್ರಕ್ಕೆ ಕಡಿಮೆಯಾಗಿಯೂ ಕೊಡು. ಹೀಗೆ ಒಬ್ಬೊಬ್ಬನಿಗೆ ತನ್ನ ಲೆಕ್ಕದ ಪ್ರಕಾರ ಅವನವನ ಸೊತ್ತನ್ನು ಹಂಚಿಕೊಡು.</verse>
				<verse number="55">ಇದಲ್ಲದೆ ಚೀಟು ಹಾಕುವುದರಿಂದ ದೇಶವನ್ನು ಪಾಲುಮಾಡಬೇಕು. ತಮ್ಮ ಗೋತ್ರಗಳ ಕುಟುಂಬಗಳ ಹೆಸರುಗಳ ಪ್ರಕಾರ ಅವರು ತಮ್ಮ ಪಾಲನ್ನು ಪಡೆಯಬೇಕು.</verse>
				<verse number="56">ಹೆಚ್ಚಾದ ಜನಕ್ಕೂ ಕಡಿಮೆಯಾದ ಜನಕ್ಕೂ ಅವರ ಸ್ವಾಸ್ತ್ಯವು ಚೀಟಿಯ ಪ್ರಕಾರ ಪಾಲಾಗಬೇಕು.”</verse>
				<verse number="57">ಲೇವಿಯರಲ್ಲಿ ಕುಟುಂಬಗಳ ಪ್ರಕಾರ ಎಣಿಕೆಯಾದವರು ಇವರೇ. ಗೇರ್ಷೋನನ ವಂಶದವರಾದ ಗೇರ್ಷೋನ್ಯರು, ಕೊಹಾತನಿಂದ ಕೊಹಾತ್ಯರ ಕುಟುಂಬ; ಮೆರಾರೀಯಿಂದ ಮೆರಾರೀಯರ ಕುಟುಂಬ.</verse>
				<verse number="58">ಲೇವಿಯರ ಕುಟುಂಬಗಳು ಇವೇ. ಲಿಬ್ನೀಯರ ಕುಟುಂಬ; ಹೆಬ್ರೋನಿಯರ ಕುಟುಂಬ; ಮಹ್ಲೀಯರ ಕುಟುಂಬ; ಮೂಷೀಯರ ಕುಟುಂಬ; ಕೋರಹೀಯರ ಕುಟುಂಬ. ಕೊಹಾತನು ಅಮ್ರಾಮನನ್ನು ಪಡೆದನು.</verse>
				<verse number="59">ಅಮ್ರಾಮನ ಹೆಂಡತಿಯ ಹೆಸರು ಯೋಕೆಬೆದಳು. ಆಕೆಯು ಈಜಿಪ್ಟಿನಲ್ಲಿ ಲೇವಿಯಿಂದ ಹುಟ್ಟಿದ ಮಗಳು. ಆಕೆಯು ಅಮ್ರಾಮನಿಗೆ ಆರೋನನನ್ನೂ ಮೋಶೆಯನ್ನೂ ಅವರ ಸಹೋದರಿಯಾದ ಮಿರ್ಯಾಮಳನ್ನೂ ಹೆತ್ತಳು.</verse>
				<verse number="60">ಆರೋನನಿಗೆ ನಾದಾಬನೂ ಅಬೀಹೂ ಎಲಿಯಾಜರನೂ ಈತಾಮಾರನೂ ಹುಟ್ಟಿದರು.</verse>
				<verse number="61">ಆದರೆ ನಾದಾಬನೂ ಅಬೀಹೂ ಯೆಹೋವ ದೇವರ ಮುಂದೆ ಆಜ್ಞಾಪಿಸದೇ ಇದ್ದ ಬೇರೆ ಅಗ್ನಿಯನ್ನು ಅರ್ಪಿಸಿದ್ದರಿಂದ ಸತ್ತರು.</verse>
				<verse number="62">ಇವರಲ್ಲಿ ಲೆಕ್ಕಿತರಾದವರು ಒಂದು ತಿಂಗಳೂ ಹಾಗೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರ ಸಂಖ್ಯೆ 23,000 ಆಗಿತ್ತು. ಇವರಿಗೆ ಇಸ್ರಾಯೇಲರಲ್ಲಿ ಸೊತ್ತು ದೊರೆಯದ ಕಾರಣ ಅವರು ಇಸ್ರಾಯೇಲರೊಳಗೆ ಲೆಕ್ಕಿತರಾಗಲಿಲ್ಲ.</verse>
				<verse number="63">ಇವರನ್ನು ಮೋಶೆಯೂ ಯಾಜಕನಾದ ಎಲಿಯಾಜರನೂ ಇಸ್ರಾಯೇಲರಲ್ಲಿ ಯೆರಿಕೋ ಪಟ್ಟಣಕ್ಕೆದುರಾಗಿ ಯೊರ್ದನ್ ನದಿಯ ಮೇಲಿರುವ ಮೋವಾಬಿನ ಬೈಲುಗಳಲ್ಲಿ ಎಣಿಸಿದರು.</verse>
				<verse number="64">ಆದರೆ ಮೋಶೆಯೂ ಯಾಜಕನಾದ ಆರೋನನೂ ಸೀನಾಯಿ ಮರುಭೂಮಿಯಲ್ಲಿ ಇಸ್ರಾಯೇಲರನ್ನು ಎಣಿಸಿದಾಗ, ಎಣಿಕೆಯಾದವರಲ್ಲಿ ಒಬ್ಬನಾದರೂ ಇವರ ಲೆಕ್ಕದಲ್ಲಿ ಸೇರಲಿಲ್ಲ.</verse>
				<verse number="65">ಏಕೆಂದರೆ ಅವರು ಮರುಭೂಮಿಯಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಯೆಹೋವ ದೇವರು ಅವರಿಗೆ ಹೇಳಿದ್ದರು. ಈ ಪ್ರಕಾರ ಯೆಫುನ್ನೆಯ ಮಗ ಕಾಲೇಬನೂ ನೂನನ ಮಗ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನೂ ಉಳಿಯಲಿಲ್ಲ.</verse>
			</chapter>
			<chapter number="27">
				<verse number="1">ಯೋಸೇಫನ ಮಗನಾದ ಮನಸ್ಸೆಯ ಕುಟುಂಬಗಳಿಗೆ ಸೇರಿದ ಚಲ್ಪಹಾದ ಎಂಬುವನು. ಇವನು ಮಾಕೀರನ ಮರಿಮಗ, ಗಿಲ್ಯಾದನ ಮೊಮ್ಮಗ ಹಾಗು ಹೇಫೆರನ ಮಗ. ಈ ಚಲ್ಪಹಾದನಿಗೆ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ ಎಂಬ ಪುತ್ರಿಯರಿದ್ದರು.</verse>
				<verse number="2">ಇವರು ಸಭೆಯ ಗುಡಾರದ ಬಾಗಿಲಿನ ಹತ್ತಿರದಲ್ಲಿದ್ದ ಮೋಶೆ, ಯಾಜಕನಾದ ಎಲಿಯಾಜರ್, ಪ್ರಧಾನರು ಮತ್ತು ಸಮಸ್ತ ಸಭೆಯವರ ಮುಂದೆ ಬಂದು ನಿಂತು ಅವರಿಗೆ,</verse>
				<verse number="3">“ನಮ್ಮ ತಂದೆಯು ಮರುಭೂಮಿಯಲ್ಲಿ ಸತ್ತನು. ಅವನು ಕೋರಹನ ಗುಂಪಿನಲ್ಲಿ ಯೆಹೋವ ದೇವರಿಗೆ ವಿರೋಧವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ, ತನ್ನ ಪಾಪದಲ್ಲಿಯೇ ಸತ್ತನು. ಅವನಿಗೆ ಪುತ್ರರು ಇರಲಿಲ್ಲ.</verse>
				<verse number="4">ಹಾಗಾದರೆ ನಮ್ಮ ತಂದೆಗೆ ಮಗನಿಲ್ಲದಿರುವುದರಿಂದ, ಅವನ ಹೆಸರನ್ನು ತನ್ನ ಕುಟುಂಬದಿಂದ ಏಕೆ ತೆಗೆಯಬೇಕು? ನೀನು ನಮ್ಮ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸೊತ್ತನ್ನು ನಮಗೆ ಕೊಡು,” ಎಂದರು.</verse>
				<verse number="5">ಮೋಶೆಯು ಅವರ ವ್ಯಾಜ್ಯವನ್ನು ಯೆಹೋವ ದೇವರ ಮುಂದೆ ತಂದನು.</verse>
				<verse number="6">ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,</verse>
				<verse number="7">ಚಲ್ಪಹಾದನ ಪುತ್ರಿಯರು ಹೇಳಿದ್ದು ಸರಿ, ನೀನು ಅವರಿಗೆ ಅವರ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸೊತ್ತನ್ನು ನಿಶ್ಚಯವಾಗಿ ಕೊಡಬೇಕು, ಅವರ ತಂದೆಯ ಸೊತ್ತನ್ನು ಅವರಿಗೆ ಸೇರಿಸಬೇಕು.</verse>
				<verse number="8">“ಇಸ್ರಾಯೇಲರ ಸಂಗಡ ಮಾಡನಾಡಿ ನೀನು ಹೇಳಬೇಕಾದದ್ದೇನೆಂದರೆ: ‘ಒಬ್ಬನು ಮಗನಿಲ್ಲದೆ ಸತ್ತರೆ, ನೀವು ಅವನ ಸೊತ್ತನ್ನು ಅವನ ಮಗಳಿಗೆ ಸೇರಿಸಬೇಕು.</verse>
				<verse number="9">ಅವನಿಗೆ ಸಹೋದರರು ಇಲ್ಲದಿದ್ದರೆ, ನೀವು ಅವನ ಸೊತ್ತನ್ನು ಅವನ ತಂದೆಯ ಸಹೋದರರಿಗೆ ಕೊಡಬೇಕು.</verse>
				<verse number="10">ಆದರೆ ಅವನ ತಂದೆಗೆ ಸಹೋದರರು ಇಲ್ಲದಿದ್ದರೆ,</verse>
				<verse number="11">ಅವನ ಕುಟುಂಬದೊಳಗೆ ಅವನಿಗೆ ಹೆಚ್ಚಾಗಿ ಸಮೀಪವಾದ ಬಂಧುವಿಗೆ ಅವನ ಸೊತ್ತನ್ನು ಕೊಡಬೇಕು. ಅವನೇ ಅದನ್ನು ಪಡೆದುಕೊಳ್ಳಲಿ. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ, ಇದು ಇಸ್ರಾಯೇಲರಿಗೆ ನ್ಯಾಯದ ಕಟ್ಟಳೆಯಾಗಿರಬೇಕು,’ ” ಎಂದು ಹೇಳಿದರು.</verse>
				<verse number="12">ಆಗ ಯೆಹೋವ ದೇವರು ಮೋಶೆಗೆ, “ನೀನು ಈ ಅಬಾರೀಮ್ ಪರ್ವತದ ಮೇಲೆ ಏರಿ, ನಾನು ಇಸ್ರಾಯೇಲರಿಗೆ ಕೊಟ್ಟ ದೇಶವನ್ನು ನೋಡು.</verse>
				<verse number="13">ಅದನ್ನು ನೋಡಿದ ಮೇಲೆ, ನಿನ್ನ ಸಹೋದರನಾದ ಆರೋನನ ಪ್ರಕಾರ ನೀನೂ ಸಹ ನಿನ್ನ ಜನರ ಬಳಿಗೆ ಸೇರುತ್ತೀ.</verse>
				<verse number="14">ಏಕೆಂದರೆ ನೀವು ಚಿನ್ ಎಂಬ ಮರುಭೂಮಿಯಲ್ಲಿ, ಇಸ್ರಾಯೇಲ್ ಜನಸಮೂಹದವರು ನನ್ನೊಡನೆ ವಾಗ್ವಾದ ಮಾಡಿದಾಗ ಅವರ ಮುಂದೆ ನೀರಿನ ಬಳಿಯಲ್ಲಿ ನನ್ನನ್ನು ಗೌರವಿಸದೆ, ನನ್ನ ಆಜ್ಞೆಯನ್ನು ಮೀರಿದಿರಿ. ಆ ನೀರು ಎಂದರೆ ಚಿನ್ ಎಂಬ ಮರುಭೂಮಿಯ ಕಾದೇಶಿನಲ್ಲಿರುವ ಮೆರೀಬಾದ ನೀರು,” ಎಂದರು.</verse>
				<verse number="15">ಮೋಶೆಯು ಯೆಹೋವ ದೇವರ ಸಂಗಡ ಮಾತನಾಡಿ,</verse>
				<verse number="16">“ಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಯೆಹೋವ ದೇವರು ಈ ಜನಸಮೂಹದ ಮೇಲೆ ಒಬ್ಬ ಮನುಷ್ಯನನ್ನು ನೇಮಿಸಿ ಇಡಲಿ.</verse>
				<verse number="17">ಅವನು ಅವರ ಮುಂದಾಗಿ ಹೋಗಲಿ, ಅವರ ಮುಂದಾಗಿ ಬರಲಿ. ಅವರನ್ನು ಕರೆದುಕೊಂಡು ಹೋಗಲಿ, ಕರೆದುಕೊಂಡು ಬರಲಿ. ಯೆಹೋವ ದೇವರ ಈ ಜನಸಮೂಹವು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು,” ಎಂದನು.</verse>
				<verse number="18">ಆಗ ಯೆಹೋವ ದೇವರು ಮೋಶೆಗೆ, “ಪವಿತ್ರಾತ್ಮವುಳ್ಳವನಾಗಿರುವ ನೂನನ ಮಗ ಯೆಹೋಶುವನನ್ನು ತೆಗೆದುಕೊಂಡು, ನಿನ್ನ ಕೈಯನ್ನು ಅವನ ಮೇಲೆ ಇಟ್ಟು,</verse>
				<verse number="19">ಅವನನ್ನು ಯಾಜಕನಾದ ಎಲಿಯಾಜರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ, ಅವರಿಗೆದುರಾಗಿ ಅವನನ್ನು ನೇಮಿಸು.</verse>
				<verse number="20">ಇಸ್ರಾಯೇಲರ ಸಮಸ್ತ ಸಭೆಯು ಅವನಿಗೆ ವಿಧೇಯರಾಗುವಂತೆ, ನಿನಗಿರುವ ಗೌರವವನ್ನು ಅವನಿಗೆ ಕೊಡಬೇಕು.</verse>
				<verse number="21">ಅವನು ಯಾಜಕನಾದ ಎಲಿಯಾಜರನ ಮುಂದೆ ನಿಲ್ಲಬೇಕು. ಎಲಿಯಾಜರನು ಯೆಹೋವ ದೇವರ ಮುಂದೆ ಊರೀಮ್ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನ ಆಜ್ಞೆಯ ಪ್ರಕಾರವೇ ಅವನು ಮತ್ತು ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲರ ಸಮೂಹವೂ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದರು.</verse>
				<verse number="22">ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಮಾಡಿ, ಯೆಹೋಶುವನನ್ನು ತೆಗೆದುಕೊಂಡು, ಅವನನ್ನು ಯಾಜಕನಾದ ಎಲಿಯಾಜರನ ಮುಂದೆಯೂ, ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ,</verse>
				<verse number="23">ಅವನ ಮೇಲೆ ತನ್ನ ಕೈಗಳನ್ನು ಇಟ್ಟು, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.</verse>
			</chapter>
			<chapter number="28">
				<verse number="1">ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,</verse>
				<verse number="2">“ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುವಾಸನೆಗೋಸ್ಕರ ಅರ್ಪಿಸುವ ಅಂದರೆ, ದಹನಬಲಿಗಾಗಿ ಆಹಾರವನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವಂತೆ ನೀವು ನೋಡಿಕೊಳ್ಳಿರಿ.’</verse>
				<verse number="3">ನೀನು ಅವರಿಗೆ ಹೇಳಬೇಕಾದದ್ದು: ‘ನೀವು ಯೆಹೋವ ದೇವರಿಗೆ ಅರ್ಪಿಸಬೇಕಾದ ಅರ್ಪಣೆ ಏನೆಂದರೆ, ನಿಯಮಿತವಾಗಿ ಪ್ರತಿದಿನ ದೋಷರಹಿತ ಒಂದು ವರ್ಷದ ಎರಡು ಕುರಿಮರಿಗಳನ್ನು ದಹನಬಲಿಯಾಗಿ ಅರ್ಪಿಸಬೇಕು.</verse>
				<verse number="4">ಒಂದು ಕುರಿಮರಿಯನ್ನು ಮುಂಜಾನೆಯಲ್ಲಿಯೂ ಮತ್ತೊಂದನ್ನು ಸಾಯಂಕಾಲದಲ್ಲಿಯೂ ಸಮರ್ಪಿಸಬೇಕು.</verse>
				<verse number="5">ಧಾನ್ಯ ಅರ್ಪಣೆಗಾಗಿ ಸುಮಾರು ಒಂದು ಲೀಟರ್ ಕುಟ್ಟಿ ತೆಗೆದ ಓಲಿವ್ ಎಣ್ಣೆಯನ್ನು ಸುಮಾರು ಒಂದುವರೆ ಕಿಲೋಗ್ರಾಂ ಗೋಧಿಹಿಟ್ಟಿಗೆ ಬೆರೆಸಿ ಸಮರ್ಪಿಸಬೇಕು.</verse>
				<verse number="6">ಇದು ಸೀನಾಯಿ ಪರ್ವತದಲ್ಲಿ ಯೆಹೋವ ದೇವರಿಗೆ ಸುವಾಸನೆಯ ದಹನಬಲಿಗಾಗಿ ನೇಮಿಸಿದ ನಿತ್ಯ ದಹನಬಲಿಯು.</verse>
				<verse number="7">ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದು ಲೀಟರ್ ಹುದುಗಿದ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಯೆಹೋವ ದೇವರಿಗೋಸ್ಕರ ಸುರಿಯಬೇಕು.</verse>
				<verse number="8">ಎರಡನೆಯ ಕುರಿಮರಿಯನ್ನು ಸಂಜೆಯಲ್ಲಿ ಅರ್ಪಿಸಬೇಕು. ಅದರ ಧಾನ್ಯ ಸಮರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಬೆಳಿಗ್ಗೆ ಮಾಡಿದಂತೆಯೇ, ಯೆಹೋವ ದೇವರಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಮಾಡಿದ ಬಲಿಯನ್ನು ನೀನು ಅರ್ಪಿಸಬೇಕು.</verse>
				<verse number="9">“ ‘ಆದರೆ ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ದೋಷರಹಿತ ಒಂದು ವರ್ಷದ ಎರಡು ಕುರಿಮರಿಗಳನ್ನೂ, ಓಲಿವ್ ಎಣ್ಣೆ ಕಲಸಿದ ಎಫಾದ ಹತ್ತನೇ ಎರಡು ಭಾಗ ಗೋಧಿಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.</verse>
				<verse number="10">ನಿತ್ಯ ದಹನಬಲಿಯ ಹೊರತು, ಪ್ರತಿ ಸಬ್ಬತ್ ದಿನಕ್ಕೆ ತಕ್ಕ ದಹನಬಲಿಯೂ ಅದರ ಪಾನದ ಅರ್ಪಣೆಯೂ ಇದೇ.</verse>
				<verse number="11">“ ‘ತಿಂಗಳುಗಳ ಆರಂಭದಲ್ಲಿ ನೀವು ಯೆಹೋವ ದೇವರಿಗೆ ದಹನಬಲಿಗಾಗಿ ದೋಷರಹಿತ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,</verse>
				<verse number="12">ಒಂದೊಂದು ಹೋರಿಗೆ ಧಾನ್ಯ ಅರ್ಪಣೆಗಾಗಿ ಎಣ್ಣೆ ಕಲಸಿದ ಎಫಾದ ಹತ್ತನೇ ಮೂರು ಭಾಗ ಹಿಟ್ಟನ್ನೂ, ಟಗರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಎಫಾದ ಹತ್ತನೇ ಎರಡು ಭಾಗ ಹಿಟ್ಟನ್ನೂ,</verse>
				<verse number="13">ಕುರಿಮರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಎಫಾದ ಹತ್ತನೇ ಒಂದು ಭಾಗ ಹಿಟ್ಟನ್ನೂ, ಯೆಹೋವ ದೇವರಿಗೆ ಸುವಾಸನೆಯ ದಹನಬಲಿಗಾಗಿ ಬೆಂಕಿಯಿಂದ ಮಾಡಿದ ಬಲಿಯೂ ಇದೇ.</verse>
				<verse number="14">ಇವುಗಳಿಗೆ ತಕ್ಕ ಪಾನದ ಅರ್ಪಣೆಗಳು ಎಂದರೆ, ಹೋರಿಗೆ ಸುಮಾರು ಎರಡು ಲೀಟರ್ ದ್ರಾಕ್ಷಾರಸವು, ಟಗರಿಗೆ ಸುಮಾರು ಒಂದುವರೆ ಲೀಟರ್ ದ್ರಾಕ್ಷಾರಸವು, ಕುರಿಮರಿಗೆ ಸುಮಾರು ಒಂದು ಲೀಟರ್ ದ್ರಾಕ್ಷಾರಸವು ಇರಬೇಕು. ಇದು ವರ್ಷದ ಪ್ರತಿ ತಿಂಗಳಿನ ಆರಂಭದಲ್ಲಿ ಹೀಗೆ ದಹನಬಲಿಯನ್ನು ಅರ್ಪಿಸಬೇಕು.</verse>
				<verse number="15">ಇದಲ್ಲದೆ ನಿತ್ಯ ದಹನಬಲಿಯ ಹೊರತು, ಯೆಹೋವ ದೇವರಿಗೆ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನೂ ಅದಕ್ಕೆ ತಕ್ಕ ಪಾನದ ಅರ್ಪಣೆಯನ್ನೂ ಸಮರ್ಪಿಸಬೇಕು.</verse>
				<verse number="16">“ ‘ಆದರೆ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನವು ಯೆಹೋವ ದೇವರ ಪಸ್ಕಹಬ್ಬವಾಗಿರಬೇಕು.</verse>
				<verse number="17">ಆ ತಿಂಗಳ ಹದಿನೈದನೆಯ ದಿನವು ಹಬ್ಬವಾಗಿದೆ. ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.</verse>
				<verse number="18">ಮೊದಲನೆಯ ದಿನದಲ್ಲಿ ಪರಿಶುದ್ಧ ದೇವಾರಾಧನೆಗಾಗಿ ಸಭೆ ಸೇರಬೇಕು. ಯಾವ ತರವಾದ ಉದ್ಯೋಗವನ್ನು ನೀವು ಆ ದಿನದಲ್ಲಿ ಮಾಡಬೇಡಿರಿ.</verse>
				<verse number="19">ಆದರೆ ನೀವು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ದಹನಬಲಿಯನ್ನು ಅರ್ಪಿಸಬೇಕು. ಯಾವುದೆಂದರೆ: ಎರಡು ಎಳೆಯ ಹೋರಿಗಳು, ಒಂದು ಟಗರು, ಒಂದು ವರ್ಷದ ಏಳು ಕುರಿಮರಿಗಳು. ಇವು ದೋಷವಿಲ್ಲದೆ ಪೂರ್ಣಾಂಗವಾಗಿಯೇ ಇರಬೇಕು.</verse>
				<verse number="20">ಅವುಗಳ ಧಾನ್ಯ ಸಮರ್ಪಣೆಯನ್ನೂ, ಎಣ್ಣೆ ಕಲಸಿದ ಐದು ಕಿಲೋಗ್ರಾಂ ಹಿಟ್ಟನ್ನು ಒಂದೊಂದು ಹೋರಿಗೆ, ಹತ್ತನೇ ಎರಡು ಭಾಗ ಟಗರಿಗೂ ಅರ್ಪಿಸಬೇಕು.</verse>
				<verse number="21">ಮತ್ತು ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಸುಮಾರು ಒಂದುವರೆ ಕಿಲೋಗ್ರಾಂ ಅರ್ಪಿಸಬೇಕು.</verse>
				<verse number="22">ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡಲು ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು.</verse>
				<verse number="23">ನಿತ್ಯ ದಹನಬಲಿಯಾಗಿರುವ ಮುಂಜಾನೆಯ ದಹನಬಲಿಯ ಹೊರತಾಗಿ ಇವುಗಳನ್ನು ನೀವು ಅರ್ಪಿಸಬೇಕು.</verse>
				<verse number="24">ಈ ಪ್ರಕಾರ ನೀವು ಏಳು ದಿವಸಗಳ ಮಟ್ಟಿಗೆ ಪ್ರತಿದಿನವೂ ಯೆಹೋವ ದೇವರಿಗೆ ಸುವಾಸನೆಗಾಗಿ ದಹನಬಲಿಯ ಆಹಾರವನ್ನು ಅರ್ಪಿಸಬೇಕು. ಅದನ್ನೂ ಅದಕ್ಕೆ ತಕ್ಕ ಪಾನಾರ್ಪಣೆಯನ್ನೂ ನಿತ್ಯವಾದ ದಹನಬಲಿಯ ಹೊರತಾಗಿ ಅರ್ಪಿಸಬೇಕು.</verse>
				<verse number="25">ಏಳನೆಯ ದಿವಸದಲ್ಲಿ ಪರಿಶುದ್ಧವಾದ ಸಭೆ ಕೂಡಬೇಕು. ಆ ದಿನದಲ್ಲಿ ನೀವು ದೈನಂದಿನ ಉದ್ಯೋಗವನ್ನೂ ಮಾಡಬೇಡಿರಿ.</verse>
				<verse number="26">“ ‘ಪ್ರಥಮ ಫಲಗಳ ದಿವಸದಲ್ಲಿಯೂ ನೀವು ಯೆಹೋವ ದೇವರಿಗೆ ನಿಮ್ಮ ವಾರಗಳಲ್ಲಿ ಹೊಸ ಧಾನ್ಯ ಸಮರ್ಪಣೆಯನ್ನು ಅರ್ಪಿಸುವಾಗ, ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡದೆ ಪವಿತ್ರ ಸಭೆ ಕೂಡಬೇಕು.</verse>
				<verse number="27">ನೀವು ಯೆಹೋವ ದೇವರಿಗೆ ಸುವಾಸನೆಯುಳ್ಳ ದಹನಬಲಿಯಾಗಿ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,</verse>
				<verse number="28">ಅವುಗಳ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಸುಮಾರು ಐದು ಕಿಲೋಗ್ರಾಂ ಹಿಟ್ಟನ್ನು ಪ್ರತಿಯೊಂದು ಹೋರಿಗೆ, ಸುಮಾರು ಮೂರುವರೆ ಕಿಲೋಗ್ರಾಂ ಟಗರಿಗೂ</verse>
				<verse number="29">ಏಳು ಕುರಿಮರಿಗಳಲ್ಲಿ ಸುಮಾರು ಒಂದುವರೆ ಕಿಲೋಗ್ರಾಂ,</verse>
				<verse number="30">ನಿಮಗೋಸ್ಕರ ಪ್ರಾಯಶ್ಚಿತ್ತಕ್ಕೆ ಒಂದು ಹೋತವನ್ನು ಸಮರ್ಪಿಸಬೇಕು.</verse>
				<verse number="31">ನಿತ್ಯವಾದ ದಹನಬಲಿಯನ್ನೂ ಅದರ ಧಾನ್ಯ ಸಮರ್ಪಣೆಯನ್ನೂ ಹೊರತಾಗಿ ಇವುಗಳ ಜೊತೆಗೆ ನೀವು ದೋಷವಿಲ್ಲದ ಪ್ರಾಣಿಗಳನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಸಮರ್ಪಿಸಬೇಕು.</verse>
			</chapter>
			<chapter number="29">
				<verse number="1">“ ‘ಏಳನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ನೀವು ಮಾಡಬಾರದು. ಅದು ನಿಮಗೆ ತುತೂರಿಗಳನ್ನು ಊದುವ ದಿವಸವಾಗಿರುವುದು.</verse>
				<verse number="2">ನೀವು ಯೆಹೋವ ದೇವರಿಗೆ ಸುವಾಸನೆಗಾಗಿ ದೋಷವಿಲ್ಲದ ಒಂದು ಎಳೆಯ ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ ದಹನಬಲಿಯಾಗಿ ಅರ್ಪಿಸಬೇಕು.</verse>
				<verse number="3">ಅವುಗಳಿಗೆ ಧಾನ್ಯ ಸಮರ್ಪಣೆಯಾಗಿ ಎಣ್ಣೆಯಿಂದ ಕಲಸಿದ ಹಿಟ್ಟನ್ನು ಹೋರಿಗೆ ಎಫಾದ ಹತ್ತನೇ ಮೂರು ಭಾಗ, ಟಗರಿಗೆ ಹತ್ತನೇ ಎರಡು ಭಾಗ,</verse>
				<verse number="4">ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಹತ್ತನೇ ಒಂದು ಭಾಗ,</verse>
				<verse number="5">ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೆ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಸಮರ್ಪಿಸಬೇಕು.</verse>
				<verse number="6">ಇದಲ್ಲದೆ ಪ್ರತಿ ತಿಂಗಳಿನ ಮತ್ತು ನಿತ್ಯವಾದ ದಹನಬಲಿಗಳಿಗೆ ಹೆಚ್ಚುವರಿಯಾಗಿ ಅವುಗಳ ಧಾನ್ಯ ಅರ್ಪಣೆಯನ್ನು ಮತ್ತು ಪಾನ ಅರ್ಪಣೆಗಳನ್ನು ನಿರ್ದಿಷ್ಟಪಡಿಸಿದಂತೆ ಸಮರ್ಪಣೆಯಾಗಬೇಕು, ಅವು ಯೆಹೋವ ದೇವರಿಗೆ ಸುವಾಸನೆಗಾಗಿ ಅರ್ಪಿಸುವ ದಹನಬಲಿಯಾಗಿರುವುವು.</verse>
				<verse number="7">“ ‘ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯನ್ನು ಕೂಡಿಸಬೇಕು. ನೀವು ಎಲ್ಲವನ್ನು ವರ್ಜಿಸಿ, ಯಾವ ಕೆಲಸವನ್ನೂ ಮಾಡಬಾರದು.</verse>
				<verse number="8">ಆದರೆ ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಗಾಗಿ ದೋಷವಿಲ್ಲದ ಒಂದು ಎಳೆಯ ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,</verse>
				<verse number="9">ಅವುಗಳ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಹಿಟ್ಟನ್ನು, ಹೋರಿಗೆ ಎಫಾದ ಹತ್ತನೇ ಮೂರು ಭಾಗ, ಟಗರಿಗೆ ಎಫಾದ ಹತ್ತನೇ ಎರಡು ಭಾಗ,</verse>
				<verse number="10">ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಹತ್ತನೇ ಒಂದು ಭಾಗ,</verse>
				<verse number="11">ಪಾಪ ಪರಿಹಾರಕ ಬಲಿಗಾಗಿ ಒಂದು ಹೋತನ್ನು ಅರ್ಪಿಸುವದರ ಜೊತೆಗೆ ಪ್ರಾಯಶ್ಚಿತ್ತದ ಪಾಪ ಪರಿಹಾರಕ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಧಾನ್ಯ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಸಮರ್ಪಿಸಬೇಕು.</verse>
				<verse number="12">“ ‘ಏಳನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ಮಾಡಬಾರದು. ಯೆಹೋವ ದೇವರಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು.</verse>
				<verse number="13">ಯೆಹೋವ ದೇವರಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಯಾಗಿ ಬಲಿಯನ್ನು ಅರ್ಪಿಸಬೇಕು. ಏನೆಂದರೆ, ದೋಷವಿಲ್ಲದ ಹದಿಮೂರು ಎಳೆಯ ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,</verse>
				<verse number="14">ಅವುಗಳ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಹಿಟ್ಟನ್ನು ಹದಿಮೂರು ಹೋರಿಗಳಲ್ಲಿ ಒಂದೊಂದಕ್ಕೆ ಎಫಾದ ಹತ್ತನೇ ಮೂರು ಭಾಗ, ಎರಡು ಟಗರುಗಳಲ್ಲಿ ಒಂದೊಂದಕ್ಕೆ ಎಫಾದ ಹತ್ತನೇ ಎರಡು ಭಾಗ,</verse>
				<verse number="15">ಹದಿನಾಲ್ಕು ಕುರಿಮರಿಗಳಲ್ಲಿ ಒಂದೊಂದಕ್ಕೆ ಎಫಾದ ಹತ್ತನೇ ಒಂದು ಭಾಗ,</verse>
				<verse number="16">ಪಾಪ ಪರಿಹಾರಕ ಬಲಿಯಾಗಿ ಒಂದು ಹೋತವನ್ನೂ ಇದಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯ ಸಮರ್ಪಣೆ ಮತ್ತು ಪಾನದ ಅರ್ಪಣೆಯನ್ನೂ ಸಮರ್ಪಿಸಬೇಕು.</verse>
				<verse number="17">“ ‘ಎರಡನೆಯ ದಿವಸದಲ್ಲಿ ಕಳಂಕವಿಲ್ಲದ ಹನ್ನೆರಡು ಎಳೆಯ ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,</verse>
				<verse number="18">ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ,</verse>
				<verse number="19">ದೋಷಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು.</verse>
				<verse number="20">“ ‘ಮೂರನೆಯ ದಿವಸದಲ್ಲಿ ದೋಷವಿಲ್ಲದ ಹನ್ನೊಂದು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,</verse>
				<verse number="21">ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ,</verse>
				<verse number="22">ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು.</verse>
				<verse number="23">“ ‘ನಾಲ್ಕನೆಯ ದಿವಸದಲ್ಲಿ ದೋಷವಿಲ್ಲದ ಹತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,</verse>
				<verse number="24">ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ</verse>
				<verse number="25">ಪಾಪ ಪರಿಹಾರಕ ಬಲಿಯಾಗಿ ಒಂದು ಹೋತವನ್ನೂ ಇದಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು.</verse>
				<verse number="26">“ ‘ಐದನೆಯ ದಿವಸದಲ್ಲಿ ದೋಷವಿಲ್ಲದ ಒಂಬತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,</verse>
				<verse number="27">ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯಪಾನ ಬಲಿಗಳನ್ನೂ,</verse>
				<verse number="28">ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು.</verse>
				<verse number="29">“ ‘ಆರನೆಯ ದಿವಸದಲ್ಲಿ ದೋಷವಿಲ್ಲದ ಎಂಟು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,</verse>
				<verse number="30">ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ,</verse>
				<verse number="31">ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು.</verse>
				<verse number="32">“ ‘ಏಳನೆಯ ದಿವಸದಲ್ಲಿ ದೋಷವಿಲ್ಲದ ಏಳು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ</verse>
				<verse number="33">ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ,</verse>
				<verse number="34">ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು.</verse>
				<verse number="35">“ ‘ಎಂಟನೆಯ ದಿನದಲ್ಲಿ ನೀವು ಹಬ್ಬದ ಸಭೆಯಾಗಿ ಕೂಡಿಬರಬೇಕು. ದೈನಂದಿನ ಕೆಲಸವನ್ನು ನೀವು ಮಾಡಬಾರದು.</verse>
				<verse number="36">ಯೆಹೋವ ದೇವರಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ದೋಷವಿಲ್ಲದ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ</verse>
				<verse number="37">ಹೋರಿಗೆ, ಟಗರಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ,</verse>
				<verse number="38">ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು.</verse>
				<verse number="39">“ ‘ಇದಲ್ಲದೆ ನಿಮ್ಮ ಹರಕೆಯನ್ನೂ ನಿಮ್ಮ ಉಚಿತವಾದ ಬಲಿಗಳನ್ನೂ ನಿಮ್ಮ ದಹನಬಲಿಗಳನ್ನೂ ನಿಮ್ಮ ಧಾನ್ಯಪಾನ ಅರ್ಪಣೆಗಳನ್ನೂ ನಿಮ್ಮ ಸಮಾಧಾನ ಬಲಿಗಳನ್ನೂ ನೀವು ನಿಮ್ಮ ಹಬ್ಬಗಳಲ್ಲಿ ಯೆಹೋವ ದೇವರಿಗೆ ಮಾಡತಕ್ಕೆ ಸಮರ್ಪಣೆಗಳು ಇವೇ.’ ”</verse>
				<verse number="40">ಯೆಹೋವ ದೇವರು ತನಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಮೋಶೆಯು ಇಸ್ರಾಯೇಲರಿಗೆ ಹೇಳಿದನು.</verse>
			</chapter>
			<chapter number="30">
				<verse number="1">ಮೋಶೆಯು ಇಸ್ರಾಯೇಲರ ಗೋತ್ರಗಳ ನಾಯಕರ ಸಂಗಡ ಮಾತನಾಡಿ, “ಯೆಹೋವ ದೇವರು ಆಜ್ಞಾಪಿಸಿದ್ದೇನೆಂದರೆ:</verse>
				<verse number="2">ಯಾವನಾದರೂ ಯೆಹೋವ ದೇವರಿಗೆ ಹರಕೆಯನ್ನು ಮಾಡಿದರೆ, ಇಲ್ಲವೆ ಕಟ್ಟಳೆಯಿಂದ ತನ್ನ ಪ್ರಾಣವನ್ನು ಬಾಧಿಸುವ ಆಣೆ ಇಟ್ಟುಕೊಂಡರೆ, ಅವನು ತನ್ನ ಮಾತನ್ನು ತಪ್ಪಿಸಬಾರದು. ಬಾಯಿಂದ ಹೊರಟ ಮಾತುಗಳ ಪ್ರಕಾರ ಎಲ್ಲವನ್ನೂ ಮಾಡಬೇಕು.</verse>
				<verse number="3">“ಸ್ತ್ರೀಯು ಯೆಹೋವ ದೇವರಿಗೆ ಹರಕೆಮಾಡಿ, ತನ್ನ ಕನ್ಯಾವಸ್ಥೆಯಲ್ಲಿ ತಂದೆಯ ಮನೆಯಲ್ಲಿ ದೇವರಿಗೆ ಹರಕೆಯನ್ನು ಮಾಡಿದಾಗ, ಇಲ್ಲವೆ ಯಾವುದಾದರೊಂದನ್ನು ಮುಟ್ಟುವುದಿಲ್ಲವೆಂದು ಪ್ರತಿಜ್ಞೆ ಮಾಡಿದಾಗ,</verse>
				<verse number="4">ಅವಳ ತಂದೆಯು ಆ ವಿಷಯವನ್ನು ತಿಳಿದು ಮೌನವಾಗಿದ್ದರೆ, ಅವಳು ಆ ಹರಕೆ ಮತ್ತು ಪ್ರಮಾಣಗಳನ್ನು ನೆರವೇರಿಸಲೇಬೇಕು.</verse>
				<verse number="5">ಆದರೆ ಅವಳ ತಂದೆ ಅದನ್ನು ಕೇಳಿ ಅವಳನ್ನು ತಡೆದರೆ, ಅವಳ ಎಲ್ಲಾ ಹರಕೆಗಳೂ ಪ್ರತಿಜ್ಞೆಗಳೂ ವ್ಯರ್ಥವಾಗುತ್ತವೆ. ಅವಳ ತಂದೆ ಅವಳನ್ನು ತಡೆದ ಕಾರಣ ಯೆಹೋವ ದೇವರು ಅವಳನ್ನು ಕ್ಷಮಿಸುವರು.</verse>
				<verse number="6">“ಆದರೆ ಅವಳಿಗೆ ಗಂಡನಿರುವ ವೇಳೆಯಲ್ಲಿ ಅವಳ ಮೇಲೆ ಹರಕೆಗಳು ಇಲ್ಲವೆ ಪ್ರಾಣವನ್ನು ಬಂಧಿಸುವ ಬಾಯಿಂದ ಬಂದ ಮಾತು ಇದ್ದರೆ,</verse>
				<verse number="7">ಅವಳ ಗಂಡನು ಆ ವಿಷಯವನ್ನು ತಿಳಿದು ಸುಮ್ಮನಿದ್ದ ಪಕ್ಷದಲ್ಲಿ ಅವಳ ಹರಕೆಗಳೂ ಪ್ರತಿಜ್ಞೆಗಳೂ ನೆರವೇರಬೇಕು.</verse>
				<verse number="8">ಆದರೆ ಅವಳ ಗಂಡನು ಅದನ್ನು ಕೇಳಿದಾಗ ಬೇಡವೆಂದು ತಡೆದು, ಅವಳ ಮೇಲೆ ಇರುವ ಅವಳ ಹರಕೆಯನ್ನೂ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆಯನ್ನೂ ನಿರರ್ಥಕ ಮಾಡಿದ ಪಕ್ಷದಲ್ಲಿ ಯೆಹೋವ ದೇವರು ಅವಳಿಗೆ ಕ್ಷಮಿಸುವರು.</verse>
				<verse number="9">“ಇದಲ್ಲದೆ ವಿಧವೆಯಾದರೂ ವಿವಾಹ ವಿಚ್ಛೇದಿತ ಮಹಿಳೆಯಾದರೂ ಇಂತಹ ಹರಕೆ ಇಲ್ಲವೆ ಪ್ರಮಾಣ ಮಾಡಿಕೊಂಡರೆ ಅವಳು ಅದನ್ನು ನೆರವೇರಿಸಬೇಕು.</verse>
				<verse number="10">“ಅವಳು ತನ್ನ ಗಂಡನ ಮನೆಯಲ್ಲಿ ಅಂತಹ ಹರಕೆ ಇಲ್ಲವೆ ಪ್ರತಿಜ್ಞೆಯನ್ನು ಮಾಡಿದಾಗ,</verse>
				<verse number="11">ಅವಳ ಗಂಡನು ಅದನ್ನು ಕೇಳಿ ಅದಕ್ಕೆ ಮೌನವಾಗಿದ್ದು, ಅವಳನ್ನು ತಡೆಯದ ಪಕ್ಷದಲ್ಲಿ, ಅವಳ ಸಮಸ್ತ ಹರಕೆಗಳೂ ಪ್ರತಿಜ್ಞೆಗಳೂ ನಿಲ್ಲುವುವು.</verse>
				<verse number="12">ಆದರೆ ಅವಳ ಗಂಡನು ಅವುಗಳನ್ನು ಕೇಳಿದ ದಿವಸದಲ್ಲೇ ಅವುಗಳನ್ನು ಪೂರ್ಣವಾಗಿ ನಿರರ್ಥಕ ಮಾಡಿದ ಪಕ್ಷದಲ್ಲಿ ಅವಳ ಹರಕೆಗಳಿಗೋಸ್ಕರವೂ ಅವಳು ಕೈಗೊಂಡ ಕಟ್ಟಳೆಗೋಸ್ಕರವೂ ಅವಳ ತುಟಿಗಳಿಂದ ಹೊರಟದ್ದು ಯಾವುದಾಗಲಿ ನಿಲ್ಲದು. ಅವಳ ಗಂಡನು ಅವುಗಳನ್ನು ನಿರರ್ಥಕ ಮಾಡಿದ್ದಾನೆ. ಯೆಹೋವ ದೇವರು ಅವಳಿಗೆ ಕ್ಷಮಿಸುವರು.</verse>
				<verse number="13">ಸಮಸ್ತ ಪ್ರಮಾಣವನ್ನೂ ಪ್ರಾಣವನ್ನು ಕುಂದಿಸುವ ಸಮಸ್ತ ಹರಕೆಗಳನ್ನೂ, ಅವಳ ಗಂಡನು ಅದನ್ನು ಸ್ಥಾಪಿಸಬಹುದು ಅಥವಾ ಅದನ್ನು ರದ್ದುಗೊಳಿಸಬಹುದು.</verse>
				<verse number="14">ಆದರೆ ಅವಳ ಗಂಡನು ಅದಕ್ಕೆ ದಿನದಿನಕ್ಕೆ ಪೂರ್ಣವಾಗಿ ಸುಮ್ಮನಿದ್ದರೆ, ಅವನು ಅವಳ ಸಮಸ್ತ ಹರಕೆಗಳನ್ನೂ ಅವಳ ಮೇಲಿರುವ ಸಮಸ್ತ ಪ್ರತಿಜ್ಞೆಗಳನ್ನೂ ಅನುಮೋದಿಸಿದಂತಾಗುವುದು. ಅವನು ಕೇಳಿದ ದಿನದಲ್ಲಿ ಅದಕ್ಕೆ ಸುಮ್ಮನಿರುವುದರಿಂದ ಅವುಗಳನ್ನು ಸ್ಥಾಪಿಸಿದ್ದಾನೆ.</verse>
				<verse number="15">ಆದರೆ ಅವನು ಕೇಳಿದ ತರುವಾಯ ಅವುಗಳನ್ನು ಹೇಗಾದರೂ ನಿರರ್ಥಕ ಮಾಡಿದರೆ, ಅವನೇ ಅವಳ ಅಕ್ರಮವನ್ನು ಹೊರಬೇಕು.”</verse>
				<verse number="16">ಗಂಡ ಹೆಂಡತಿಯರ ವಿಷಯದಲ್ಲಿಯೂ ತಂದೆಯ ಮನೆಯಲ್ಲಿ ಕನ್ಯಾವಸ್ಥೆಯಲ್ಲಿರುವ ಮಗಳ ವಿಷಯದಲ್ಲಿಯೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಕಟ್ಟಳೆಗಳು ಇವೇ.</verse>
			</chapter>
			<chapter number="31">
				<verse number="1">ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,</verse>
				<verse number="2">“ನೀನು ಇಸ್ರಾಯೇಲರಿಂದ ಮಿದ್ಯಾನ್ಯರಿಗೆ ಮುಯ್ಯನ್ನು ತೀರಿಸಬೇಕು. ತರುವಾಯ ನೀನು ನಿನ್ನ ಪೂರ್ವಜರ ಬಳಿಗೆ ಸೇರಬೇಕು,” ಎಂದರು.</verse>
				<verse number="3">ಆಗ ಮೋಶೆಯು ಜನರ ಸಂಗಡ ಮಾತನಾಡಿ, “ನಿಮ್ಮೊಳಗಿಂದ ಜನರು ಯುದ್ಧಕ್ಕೆ ಸಿದ್ಧಮಾಡಿಕೊಳ್ಳಲಿ. ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ, ಯೆಹೋವ ದೇವರ ಪ್ರತೀಕಾರವನ್ನು ಅವರಿಗೆ ತೀರಿಸಬೇಕು.</verse>
				<verse number="4">ಇಸ್ರಾಯೇಲರ ಸಮಸ್ತ ಗೋತ್ರಗಳೊಳಗೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯನ್ನು ಯುದ್ಧಕ್ಕೆ ಕಳುಹಿಸಬೇಕು,” ಎಂದನು.</verse>
				<verse number="5">ಆಗ ಇಸ್ರಾಯೇಲರ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿ ಯುದ್ಧಕ್ಕೆ ಸಿದ್ಧವಾದ ಹನ್ನೆರಡು ಸಾವಿರ ಮಂದಿಯನ್ನು ಲೆಕ್ಕಿಸಿಕೊಟ್ಟರು.</verse>
				<verse number="6">ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿರುವ ಅವರನ್ನೂ ಯಾಜಕನಾದ ಎಲಿಯಾಜರನ ಮಗ ಫೀನೆಹಾಸನನ್ನೂ ಪರಿಶುದ್ಧ ಸಲಕರಣೆಗಳ ಸಂಗಡವೂ ಸೂಚಿಸುವದಕ್ಕೋಸ್ಕರ ತುತೂರಿಗಳ ಸಂಗಡವೂ ಯುದ್ಧಕ್ಕೆ ಕಳುಹಿಸಿದನು.</verse>
				<verse number="7">ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವರು ಮಿದ್ಯಾನ್ಯರ ಮೇಲೆ ಯುದ್ಧಮಾಡಿ,</verse>
				<verse number="8">ಗಂಡಸರೆಲ್ಲರನ್ನು ಕೊಂದುಹಾಕಿದರು. ಈ ಹತರಾದವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದುಹಾಕಿದರು. ಅವರು ಮಿದ್ಯಾನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗ ಬಿಳಾಮನನ್ನೂ ಖಡ್ಗದಿಂದ ಕೊಂದುಹಾಕಿದರು.</verse>
				<verse number="9">ಇಸ್ರಾಯೇಲರು ಮಿದ್ಯಾನ್ಯರ ಸ್ತ್ರೀಯರನ್ನೂ, ಅವರ ಮಕ್ಕಳನ್ನೂ ಸೆರೆಹಿಡಿದು, ಅವರ ಸಮಸ್ತ ಪಶುಗಳನ್ನೂ, ಅವರ ಸಮಸ್ತ ಹಿಂಡುಗಳನ್ನೂ, ಅವರ ಸಮಸ್ತ ಸಲಕರಣೆಗಳನ್ನೂ ಸುಲಿಗೆ ಮಾಡಿದರು.</verse>
				<verse number="10">ಅವರು ವಾಸಮಾಡಿದ ಸಮಸ್ತ ಪಟ್ಟಣಗಳನ್ನೂ, ಅವರ ಸಮಸ್ತ ಕೋಟೆಗಳನ್ನೂ ಬೆಂಕಿಯಿಂದ ಸುಟ್ಟರು.</verse>
				<verse number="11">ಮನುಷ್ಯರಲ್ಲಿಯೂ, ಪಶುಗಳಲ್ಲಿಯೂ ಸಮಸ್ತ ಸುಲಿಗೆಯನ್ನೂ, ಸಮಸ್ತ ಲೂಟಿಯನ್ನೂ ತೆಗೆದುಕೊಂಡರು.</verse>
				<verse number="12">ಅವರು ಸೆರೆಯವರನ್ನೂ, ಲೂಟಿಯನ್ನೂ, ಸುಲಿಗೆಯನ್ನೂ ಮೋಶೆ, ಯಾಜಕನಾದ ಎಲಿಯಾಜರನು, ಇಸ್ರಾಯೇಲರ ಸಭೆ ಇವರ ಬಳಿಗೆ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ಮೇಲೆ ಇರುವ ಮೋವಾಬಿನ ಬಯಲುಗಳಲ್ಲಿ ಇದ್ದ ಪಾಳೆಯದೊಳಗೆ ತಂದರು.</verse>
				<verse number="13">ಮೋಶೆಯೂ, ಯಾಜಕನಾದ ಎಲಿಯಾಜರನೂ, ಸಮೂಹದ ಪ್ರಧಾನರೆಲ್ಲರೂ ಅವರಿಗೆ ಎದುರಾಗಿ ಪಾಳೆಯದ ಹೊರಗೆ ಹೋದರು.</verse>
				<verse number="14">ಆದರೆ ಮೋಶೆಯು ಯುದ್ಧದಿಂದ ಬಂದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಆಗಿರುವ ಪಾಳೆಯದ ಮೇಲೆ ಕೋಪಮಾಡಿಕೊಂಡರು.</verse>
				<verse number="15">ಮೋಶೆಯು ಅವರಿಗೆ, “ಹೆಂಗಸರನ್ನೆಲ್ಲಾ ಉಳಿಸಿದರೋ?</verse>
				<verse number="16">ಇವರೇ ಬಿಳಾಮನ ಮಾತಿನಿಂದ ಪೆಯೋರನ ಕಾರ್ಯದಲ್ಲಿ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡುವುದಕ್ಕೆ ಇಸ್ರಾಯೇಲರಿಗೆ ಕಾರಣವಾಗಿದ್ದರು. ಯೆಹೋವ ದೇವರ ಸಭೆಯೊಳಗೆ ಇವರಿಂದಲೇ ವ್ಯಾಧಿಯಾಯಿತು.</verse>
				<verse number="17">ಆದಕಾರಣ ಈಗ ಬಾಲಕರನ್ನೂ, ಎಲ್ಲಾ ಪುರುಷನನ್ನು ಅರಿತಿರುವ ಎಲ್ಲಾ ಸ್ತ್ರೀಯರನ್ನು ಕೊಂದುಹಾಕಿರಿ.</verse>
				<verse number="18">ಆದರೆ ಪುರುಷನನ್ನು ಅರಿಯದ ಎಲ್ಲಾ ಹೆಣ್ಣು ಮಕ್ಕಳನ್ನು ನಿಮಗಾಗಿ ಉಳಿಸಿಕೊಳ್ಳಿರಿ.</verse>
				<verse number="19">“ಇದಲ್ಲದೆ ನಿಮ್ಮಲ್ಲಿ ಪ್ರಾಣ ತೆಗೆದವರು ಮತ್ತು ಶವವನ್ನು ಮುಟ್ಟಿದವರು ಏಳು ದಿವಸ ಪಾಳೆಯದ ಹೊರಗೆ ಇರಬೇಕು. ನೀವೂ, ನಿಮ್ಮ ಸೆರೆಯವರೂ ಮೂರನೆಯ ಹಾಗೂ ಏಳನೆಯ ದಿವಸಗಳಲ್ಲಿ ನಿಮ್ಮನ್ನು ಶುದ್ಧ ಮಾಡಿಕೊಳ್ಳಬೇಕು.</verse>
				<verse number="20">ಎಲ್ಲಾ ಬಟ್ಟೆಗಳನ್ನೂ, ಎಲ್ಲಾ ಚರ್ಮದ ಸಲಕರಣೆಗಳನ್ನೂ, ಮೇಕೆ ಕೂದಲಿಂದ ಮಾಡಿದ್ದೆಲ್ಲವನ್ನೂ, ಕಟ್ಟಿಗೆ ಸಲಕರಣೆಗಳೆಲ್ಲವನ್ನೂ ಶುದ್ಧಮಾಡಬೇಕು,” ಎಂದು ಹೇಳಿದನು.</verse>
				<verse number="21">ಯಾಜಕನಾದ ಎಲಿಯಾಜರನು ಯುದ್ಧಕ್ಕೆ ಹೋದ ಪಾಳೆಯದ ಜನರಿಗೆ, “ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ನ್ಯಾಯದ ಕಟ್ಟಳೆಯು ಇದೇ:</verse>
				<verse number="22">ಬೆಂಕಿ ತಾಳುವ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು</verse>
				<verse number="23">ನೀವು ಬೆಂಕಿಯಿಂದ ದಾಟಿಸಬೇಕು. ಆಗ ಅವು ಶುದ್ಧವಾಗುವುವು. ಶುದ್ಧೀಕರಣದ ನೀರಿನಲ್ಲಿ ಅದ್ದಿ ಶುದ್ಧಮಾಡಬೇಕು. ಆಗ ಅವು ಶುದ್ಧವಾಗುವುವು. ಆದರೆ ಬೆಂಕಿ ತಾಳದ ಸಮಸ್ತವನ್ನು ನೀವು ನೀರಿನಿಂದ ತೊಳೆಯಬೇಕು.</verse>
				<verse number="24">ಏಳನೆಯ ದಿವಸದಲ್ಲಿ ನೀವು ನಿಮ್ಮ ಬಟ್ಟೆಗಳನ್ನು ಒಗೆದುಕೊಂಡು ಶುದ್ಧರಾಗಬೇಕು. ತರುವಾಯ ಪಾಳೆಯದೊಳಗೆ ಬರಬೇಕು,” ಎಂದು ಹೇಳಿದನು.</verse>
				<verse number="25">ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,</verse>
				<verse number="26">“ನೀನೂ, ಯಾಜಕನಾದ ಎಲಿಯಾಜರನೂ, ಕುಲಾಧಿಪತಿಗಳೂ ಸೈನಿಕರ ಕೈಗೆ ಸಿಕ್ಕಿರುವ ಮನುಷ್ಯರನ್ನೂ ಪಶುಗಳನ್ನೂ ಲೆಕ್ಕಮಾಡಿ ಒಟ್ಟು ಎಷ್ಟೆಂದು ತಿಳಿದುಕೊಳ್ಳಿರಿ.</verse>
				<verse number="27">ಆ ಸುಲಿಗೆಯನ್ನು ಯುದ್ಧಕ್ಕೆ ಹೊರಟ ಯುದ್ಧಭಟರಿಗೂ, ಸಮಸ್ತ ಸಭೆಗೂ ಎರಡು ಪಾಲನ್ನು ಮಾಡಬೇಕು.</verse>
				<verse number="28">ಜನರಿಂದಲೂ, ಪಶುಗಳಿಂದಲೂ, ಕತ್ತೆಗಳಿಂದಲೂ, ಕುರಿಗಳಿಂದಲೂ ಐನೂರರಲ್ಲಿ ಒಂದು ಪ್ರಾಣವನ್ನು ಯುದ್ಧಕ್ಕೆ ಹೊರಟ ಯುದ್ಧಭಟರ ಕಡೆಯಿಂದ ಯೆಹೋವ ದೇವರಿಗೆ ಕಪ್ಪವಾಗಿ ಎತ್ತಬೇಕು.</verse>
				<verse number="29">ಅವರ ಅರ್ಧ ಪಾಲಿನಿಂದ ಅದನ್ನು ತೆಗೆದುಕೊಂಡು, ಯೆಹೋವ ದೇವರಿಗೆ ಅರ್ಪಣೆಯಾಗಿ, ಯಾಜಕನಾದ ಎಲಿಯಾಜರನಿಗೆ ಕೊಡಬೇಕು.</verse>
				<verse number="30">ಇಸ್ರಾಯೇಲರ ಅರ್ಧ ಪಾಲಿನಿಂದ ಜನರಿಂದಲೂ, ಕತ್ತೆಗಳಿಂದಲೂ, ಮಂದೆಗಳಿಂದಲೂ, ಸಮಸ್ತ ಪಶುಗಳಿಂದಲೂ ಐವತ್ತರಲ್ಲಿ ಒಂದು ಪಾಲು ತೆಗೆದುಕೊಂಡು, ಅವುಗಳನ್ನು ಯೆಹೋವ ದೇವರ ಗುಡಾರವನ್ನು ನಿರ್ವಹಿಸುವ ಲೇವಿಯರಿಗೆ ಕೊಡಬೇಕು,” ಎಂದರು.</verse>
				<verse number="31">ಆಗ ಮೋಶೆಯೂ, ಯಾಜಕನಾದ ಎಲಿಯಾಜರನೂ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಮಾಡಿದರು.</verse>
				<verse number="32">ಯುದ್ಧಭಟರು ತೆಗೆದುಕೊಂಡು ಬಂದ ಲೂಟಿಯಲ್ಲಿ ಉಳಿದ ಸುಲಿಗೆ ಎಷ್ಟೆಂದರೆ 6,75,000 ಕುರಿಗಳು.</verse>
				<verse number="33">72,000 ಪಶುಗಳು;</verse>
				<verse number="34">ಕತ್ತೆಗಳು 61,000;</verse>
				<verse number="35">ಪುರುಷರನ್ನು ಅರಿಯದ ಸ್ತ್ರೀಯರು 32,000 ಮಂದಿ.</verse>
				<verse number="36">ಯುದ್ಧಕ್ಕೆ ಹೊರಟವರ ಅರ್ಧ ಭಾಗದ ಲೆಕ್ಕವಿದು: 3,37,500 ಕುರಿಗಳಿಂದ</verse>
				<verse number="37">ಯೆಹೋವ ದೇವರಿಗೆ ಕೊಡಲಾದ ಕಪ್ಪವು 675;</verse>
				<verse number="38">ಹಾಗೆಯೇ ಅವರಿಗೆ ದೊರಕಿದ 36,000 ದನಕರುಗಳಲ್ಲಿ ಯೆಹೋವ ದೇವರಿಗೆ ಉಂಟಾದ ಕಪ್ಪವು 72 ದನಕರುಗಳು;</verse>
				<verse number="39">30,500 ಕತ್ತೆಗಳು; ಅವುಗಳಿಂದ ಯೆಹೋವ ದೇವರಿಗೆ ಉಂಟಾದ ಕಪ್ಪವು 61;</verse>
				<verse number="40">16,000 ಜನರು, ಅವರಿಂದ ಯೆಹೋವ ದೇವರಿಗೆ ಉಂಟಾದ ಕಪ್ಪವು 32 ಜನ.</verse>
				<verse number="41">ಮೋಶೆಯು ಯೆಹೋವ ದೇವರಿಗೆ ಪಡೆಯುವ ಕಪ್ಪವನ್ನು ಯಾಜಕನಾದ ಎಲಿಯಾಜರನಿಗೆ ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರ ಕೊಟ್ಟನು.</verse>
				<verse number="42">ಮೋಶೆಯು ಯುದ್ಧಕ್ಕೆ ಹೋದ ಜನರಿಂದ ತೆಗೆದುಕೊಂಡು ಇಸ್ರಾಯೇಲರಿಗೆ ಹಂಚಿದ ಅರ್ಧ ಭಾಗದ ವಿವರ:</verse>
				<verse number="43">ಕುರಿಗಳಿಂದ ಸಭೆಯ ಅರ್ಧ 3, 37,500 ಕುರಿಗಳು;</verse>
				<verse number="44">36,000 ಪಶುಗಳು;</verse>
				<verse number="45">30,500 ಕತ್ತೆಗಳು;</verse>
				<verse number="46">16,000 ಜನರು;</verse>
				<verse number="47">ಮೋಶೆಯು ಇಸ್ರಾಯೇಲರ ಅರ್ಧದಿಂದ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಐವತ್ತರಲ್ಲಿ ಒಂದು ಪಾಲನ್ನು ತೆಗೆದುಕೊಂಡು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರ ಯೆಹೋವ ದೇವರ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.</verse>
				<verse number="48">ಆಗ ಸೈನ್ಯದ ಅಧಿಕಾರಿಗಳಾದ ಸಹಸ್ರಾಧಿಪತಿಗಳೂ ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು,</verse>
				<verse number="49">ಮೋಶೆಗೆ ಅವರು, “ನಿನ್ನ ಸೇವಕರಾದ ನಾವು ನಮ್ಮ ಕೈಯಲ್ಲಿದ್ದ ಯುದ್ಧಭಟರ ಲೆಕ್ಕವನ್ನು ತೆಗೆದುಕೊಂಡೆವು. ಅವರೊಳಗೆ ಒಬ್ಬನಾದರೂ ಕಡಿಮೆಯಾಗಲಿಲ್ಲ.</verse>
				<verse number="50">ಆದ್ದರಿಂದ ಯೆಹೋವ ದೇವರ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ವಸ್ತುಗಳಾದ ಸರಪಣಿಗಳನ್ನೂ, ಕಡಗಗಳನ್ನೂ, ಉಂಗುರಗಳನ್ನೂ, ವಾಲೆಗಳನ್ನೂ, ಪದಕಗಳನ್ನೂ ಯೆಹೋವ ದೇವರಿಗೆ ಕಾಣಿಕೆಯಾಗಿ ತಂದಿದ್ದೇವೆ,” ಎಂದು ಹೇಳಿದರು.</verse>
				<verse number="51">ಮೋಶೆಯೂ, ಯಾಜಕನಾದ ಎಲಿಯಾಜರನೂ ವಿಚಿತ್ರ ಕೆಲಸವಾಗಿರುವ ಬಂಗಾರವನ್ನೆಲ್ಲಾ ಅದರಿಂದ ತೆಗೆದುಕೊಂಡರು.</verse>
				<verse number="52">ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ ಯೆಹೋವ ದೇವರಿಗೆ ಅರ್ಪಿಸಿದ ಕಾಣಿಕೆಯ ಒಟ್ಟು ತೂಕ 16,750 ಶೆಕೆಲ್‌ಗಳು.</verse>
				<verse number="53">ಯುದ್ಧದ ಜನರು ಒಬ್ಬೊಬ್ಬನು ಸ್ವಂತವಾಗಿ ಸುಲಿದುಕೊಂಡಿದ್ದನು.</verse>
				<verse number="54">ಆಗ ಮೋಶೆಯೂ, ಯಾಜಕನಾದ ಎಲಿಯಾಜರನೂ ಸಹಸ್ರಾಧಿಪತಿಗಳ ಮತ್ತು ಶತಾಧಿಪತಿಗಳ ಕೈಯಿಂದ ಬಂಗಾರವನ್ನು ತೆಗೆದುಕೊಂಡು, ಯೆಹೋವ ದೇವರ ಸಮ್ಮುಖದಲ್ಲಿ ಇಸ್ರಾಯೇಲರಿಗೆ ಜ್ಞಾಪಕಕ್ಕಾಗಿ ದೇವದರ್ಶನ ಗುಡಾರದೊಳಗೆ ತಂದರು.</verse>
			</chapter>
			<chapter number="32">
				<verse number="1">ರೂಬೇನನ ಮಕ್ಕಳಿಗೂ ಗಾದನ ಮಕ್ಕಳಿಗೂ ಅಧಿಕ ಸಂಖೆಯಲ್ಲಿ ಪಶುಗಳು ಇದ್ದವು. ಅವರು ಯಜ್ಜೇರ್, ಗಿಲ್ಯಾದ್ ಎಂಬ ದೇಶಗಳನ್ನು ನೋಡಿದಾಗ, ಅದು ಪಶುಗಳಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.</verse>
				<verse number="2">ಆದ್ದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆ ಮತ್ತು ಯಾಜಕನಾದ ಎಲಿಯಾಜರನ ಬಳಿಗೂ ಸಭೆಯ ಪ್ರಧಾನರಿಗೂ ಬಳಿಗೂ ಬಂದು ಮಾತನಾಡಿ:</verse>
				<verse number="3">“ಅಟಾರೋತ್, ದೀಬೋನ್, ಯಜ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬವುಗಳು,</verse>
				<verse number="4">ಯೆಹೋವ ದೇವರು ಇಸ್ರಾಯೇಲರ ಸಮೂಹಕ್ಕೆ ಅಧೀನಪಡಿಸಿದ ಪ್ರದೇಶವು ಪಶುಗಳ ಮೇವಿಗೆ ಸೂಕ್ತವಾಗಿದೆ. ನಿಮ್ಮ ಸೇವಕರಿಗೂ ಪಶುಗಳು ಉಂಟು.</verse>
				<verse number="5">ಆದ್ದರಿಂದ ನಮಗೆ ನಿಮ್ಮ ದೃಷ್ಟಿಯಲ್ಲಿ ದಯೆಯು ಸಿಕ್ಕಿದ್ದಾದರೆ, ಈ ದೇಶವನ್ನು ನಿಮ್ಮ ಸೇವಕರಿಗೆ ಸ್ವಾಸ್ತ್ಯಕ್ಕಾಗಿ ಕೊಡಬೇಕು. ನಮ್ಮನ್ನು ಯೊರ್ದನ್ ನದಿಯ ಆಚೆಗೆ ತೆಗೆದುಕೊಂಡು ಹೋಗಬೇಡಿರಿ,” ಎಂದರು.</verse>
				<verse number="6">ಆಗ ಮೋಶೆಯು ಗಾದನ ಮಕ್ಕಳಿಗೂ, ರೂಬೇನನ ಮಕ್ಕಳಿಗೂ, “ನಿಮ್ಮ ಸಹೋದರರು ಯುದ್ಧಕ್ಕೆ ಹೋಗುವಾಗ ನೀವು ಇಲ್ಲಿ ಕುಳಿತಿರಬೇಕೋ?</verse>
				<verse number="7">ಯೆಹೋವ ದೇವರು ಅವರಿಗೆ ಕೊಟ್ಟ ದೇಶಕ್ಕೆ ಹೋಗುವುದಕ್ಕೆ ನೀವು ಇಸ್ರಾಯೇಲರ ಹೃದಯಗಳನ್ನು ಅಧೈರ್ಯಪಡಿಸುವುದು ಏಕೆ?</verse>
				<verse number="8">ನಾನು ದೇಶವನ್ನು ನೋಡುವುದಕ್ಕೆ ಕಾದೇಶ್ ಬರ್ನೇಯದಿಂದ ಅವರನ್ನು ಕಳುಹಿಸಿದಾಗ, ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.</verse>
				<verse number="9">ಹೇಗೆಂದರೆ ಅವರು ಎಷ್ಕೋಲೆಂಬ ಹಳ್ಳದವರೆಗೆ ಬಂದು, ದೇಶವನ್ನು ನೋಡಿದಾಗ, ಇಸ್ರಾಯೇಲರ ಹೃದಯವನ್ನು ಯೆಹೋವ ದೇವರು ಅವರಿಗೆ ಕೊಟ್ಟ ದೇಶದ ಒಳಗೆ ಹೋಗದ ಹಾಗೆ ಅಧೈರ್ಯಪಡಿಸಿದನು.</verse>
				<verse number="10">ಯೆಹೋವ ದೇವರು ಅದೇ ಸಮಯದಲ್ಲಿ ಕೋಪೋದ್ರೇಕವುಳ್ಳವರಾಗಿ ಪ್ರಮಾಣಮಾಡಿ,</verse>
				<verse number="11">ಅವರು ನನ್ನನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸದೆ ಇರುವುದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶವನ್ನು ಈಜಿಪ್ಟಿನೊಳಗಿಂದ ಹೊರಬಂದ ಇಪ್ಪತ್ತು ವರ್ಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ</verse>
				<verse number="12">ಯೆಹೋವ ದೇವರನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸಿದ ಕೆನಿಜ್ಜೀಯನಾದ ಯೆಫುನ್ನೆಯ ಮಗನಾಗಿರುವ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವನ ಹೊರತು ಬೇರಾರೂ ನೋಡುವುದಿಲ್ಲ.</verse>
				<verse number="13">ಯೆಹೋವ ದೇವರು ಇಸ್ರಾಯೇಲರ ಮೇಲೆ ಕೋಪೋದ್ರೇಕಗೊಂಡದ್ದರಿಂದ, ಅವರ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಂತತಿಯು ದಹಿಸುವವರೆಗೆ ಅವರನ್ನು ಮರುಭೂಮಿಯಲ್ಲಿ ನಲವತ್ತು ವರ್ಷ ಅಲೆದಾಡುವಂತೆ ಮಾಡಿದರು.</verse>
				<verse number="14">“ನಿಮ್ಮ ಪಿತೃಗಳ ಬದಲಾಗಿ ಬಂದಿರುವ ನೀವು, ಪಾಪಿಗಳಾಗಿ ಇಸ್ರಾಯೇಲ್ ಕುರಿತು ಯೆಹೋವ ದೇವರ ಕೋಪವನ್ನೂ ಮತ್ತಷ್ಟು ಹೆಚ್ಚಿಸುತ್ತಿದ್ದೀರಲ್ಲಾ.</verse>
				<verse number="15">ಏಕೆಂದರೆ ನೀವು ದೇವರ ಕಡೆಯಿಂದ ತೊಲಗಿದರೆ, ದೇವರು ಅವರನ್ನು ಮರುಭೂಮಿಯಲ್ಲಿಯೇ ಇರಿಸಿಬಿಡುವನು. ನೀವು ಈ ಸಮಸ್ತ ಜನರ ನಾಶಕ್ಕೆ ನೀವೇ ಕಾರಣರಾಗುವಿರಿ,” ಎಂದು ಹೇಳಿದನು.</verse>
				<verse number="16">ಆಗ ಅವರು ಮೋಶೆಯ ಬಳಿಗೆ ಬಂದು, “ನಾವು ಇಲ್ಲಿ ನಮ್ಮ ಪಶುಗಳಿಗೋಸ್ಕರ ಹಟ್ಟಿಗಳನ್ನೂ, ನಮ್ಮ ಸ್ತ್ರಿಯರಿಗೋಸ್ಕರ ಮತ್ತು ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟುವೆವು.</verse>
				<verse number="17">ಆದರೆ ನಾವು ಇಸ್ರಾಯೇಲರ ಮುಂದೆ ಅವರನ್ನು ಅವರ ಸ್ಥಳದೊಳಗೆ ಸೇರಿಸುವವರೆಗೆ ಯುದ್ಧಕ್ಕೆ ಸಿದ್ಧರಾಗಿ ಓಡುವೆವು. ನಮ್ಮ ಸ್ತ್ರೀಯರು ಮತ್ತು ಮಕ್ಕಳು ಮಾತ್ರ ಈ ದೇಶದ ನಿವಾಸಿಗಳ ದೆಸೆಯಿಂದ ಭದ್ರವಾದ ಊರುಗಳಲ್ಲಿ ವಾಸವಾಗಿರಬೇಕು.</verse>
				<verse number="18">ಇಸ್ರಾಯೇಲರಲ್ಲಿ ಒಬ್ಬೊಬ್ಬನು ತನ್ನ ಸೊತ್ತನ್ನು ಹೊಂದಿಕೊಳ್ಳುವವರೆಗೆ, ನಾವು ನಮ್ಮ ಮನೆಗಳಿಗೆ ತಿರುಗುವುದಿಲ್ಲ.</verse>
				<verse number="19">ನಾವು ಯೊರ್ದನ್ ನದಿಯ ಆಚೆಯಲ್ಲಿ ಅವರ ಸಂಗಡ ಸೊತ್ತನ್ನು ತೆಗೆದುಕೊಳ್ಳುವುದಿಲ್ಲ. ಏಕೆಂದರೆ ನಮ್ಮ ಸೊತ್ತು ನಮಗೆ ಯೊರ್ದನ್ ನದಿಯ ಈಚೆ ಪೂರ್ವದಿಕ್ಕಿನಲ್ಲಿ ಬಂತು,” ಎಂದನು.</verse>
				<verse number="20">ಮೋಶೆಯು ಅವರಿಗೆ, “ನೀವು ಈ ಕಾರ್ಯವನ್ನು ಮಾಡಿದರೆ, ನೀವು ಯೆಹೋವ ದೇವರ ಮುಂದೆ ಯುದ್ಧಕ್ಕೆ ಸಿದ್ಧವಾಗಿದ್ದರೆ,</verse>
				<verse number="21">ನಿಮ್ಮಲ್ಲಿ ಸಿದ್ಧವಾದವರೆಲ್ಲರೂ ಯೆಹೋವ ದೇವರು ತಮ್ಮ ಶತ್ರುಗಳನ್ನು ತಮ್ಮ ಸನ್ನಿಧಿಯಿಂದ ಹೊರಡಿಸುವವರೆಗೆ, ಯೆಹೋವ ದೇವರ ಮುಂದೆ ಯೊರ್ದನ್ ನದಿಯನ್ನು ದಾಟಿದರೆ,</verse>
				<verse number="22">ದೇಶವು ಯೆಹೋವ ದೇವರ ಮುಂದೆ ವಶವಾದ ತರುವಾಯ, ನೀವು ಯೆಹೋವ ದೇವರ ಮತ್ತು ಇಸ್ರಾಯೇಲರ ದೃಷಿಯಲ್ಲಿ ನಿರಪರಾಧಿಗಳಾಗಿದ್ದು, ಈ ದೇಶವು ಯೆಹೋವ ದೇವರ ಮುಂದೆ ನಿಮ್ಮ ಸೊತ್ತಾಗುವುದು.</verse>
				<verse number="23">“ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಯೆಹೋವ ದೇವರ ವಿರೋಧವಾಗಿ ಪಾಪಮಾಡಿದವರಾಗುವಿರಿ, ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವುದೆಂದು ತಿಳಿದುಕೊಳ್ಳಿರಿ.</verse>
				<verse number="24">ನಿಮ್ಮ ಸ್ತ್ರಿಯರಿಗೋಸ್ಕರ ಮತ್ತು ಮಕ್ಕಳಿಗೋಸ್ಕರ ಪಟ್ಟಣಗಳನ್ನೂ ಕಟ್ಟಿ, ನಿಮ್ಮ ಬಾಯಿಂದ ಹೊರಟದ್ದನ್ನು ಮಾಡಿರಿ,” ಎಂದು ಹೇಳಿದನು.</verse>
				<verse number="25">ಗಾದನ ಮಕ್ಕಳೂ, ರೂಬೇನನ ಮಕ್ಕಳೂ ಮೋಶೆಯ ಸಂಗಡ ಮಾತನಾಡಿ, “ನಮ್ಮ ಒಡೆಯನು ಆಜ್ಞಾಪಿಸಿದ ಪ್ರಕಾರ ನಿನ್ನ ಸೇವಕರು ಮಾಡುವರು.</verse>
				<verse number="26">ನಮ್ಮ ಮಕ್ಕಳೂ, ನಮ್ಮ ಹೆಂಡತಿಯರೂ, ನಮ್ಮ ಸಂಪತ್ತೂ ನಮ್ಮ ಪಶುಗಳೆಲ್ಲಾ ಅಲ್ಲಿ ಗಿಲ್ಯಾದಿನ ಪಟ್ಟಣಗಳಲ್ಲಿ ಇರಲಿ.</verse>
				<verse number="27">ಆದರೆ ನಿನ್ನ ಸೇವಕರು ಯುದ್ಧಕ್ಕೆ ಸಿದ್ಧವಾದವರೆಲ್ಲರೂ ನಮ್ಮ ಒಡೆಯನು ಹೇಳಿದ ಪ್ರಕಾರ ಯೆಹೋವ ದೇವರ ಮುಂದೆ ಯುದ್ಧಕ್ಕೆ ದಾಟಿಹೋಗುವರು,” ಎಂದರು.</verse>
				<verse number="28">ಆಗ ಮೋಶೆಯು ಅವರ ವಿಷಯವಾಗಿ ಯಾಜಕನಾದ ಎಲಿಯಾಜರನಿಗೂ, ನೂನನ ಮಗ ಯೆಹೋಶುವನಿಗೂ, ಇಸ್ರಾಯೇಲರ ಗೋತ್ರಗಳ ಮುಖ್ಯ ಯಜಮಾನರಿಗೂ ಆಜ್ಞೆಮಾಡಿದರು.</verse>
				<verse number="29">ಮೋಶೆಯು ಅವರಿಗೆ, “ಗಾದನ ಮಕ್ಕಳೂ, ರೂಬೇನನ ಮಕ್ಕಳೂ ಎಲ್ಲರೂ ಯುದ್ಧಕ್ಕೆ ಸಿದ್ಧವಾಗಿದ್ದು, ನಿಮ್ಮ ಸಂಗಡ ಯೊರ್ದನ್ ನದಿಯನ್ನು ಯೆಹೋವ ದೇವರ ಮುಂದೆ ದಾಟಿದರೆ, ದೇಶವು ನಿಮ್ಮ ಮುಂದೆ ವಶವಾಗಿದ್ದಾಗ ನೀವು ಅವರಿಗೆ ಗಿಲ್ಯಾದ್ ದೇಶವನ್ನು ಸೊತ್ತಾಗಿ ಕೊಡಬೇಕು.</verse>
				<verse number="30">ಆದರೆ ಅವರು ಯುದ್ಧಕ್ಕೆ ಸಿದ್ಧವಾಗಿ ನಿಮ್ಮ ಸಂಗಡ ದಾಟಿ ಬಾರದಿದ್ದರೆ, ಅವರು ನಿಮ್ಮೊಂದಿಗೆ ಕಾನಾನ್ ದೇಶದಲ್ಲಿಯೇ ಸೊತ್ತನ್ನು ಹೊಂದಿಕೊಳ್ಳಬೇಕು,” ಎಂದನು.</verse>
				<verse number="31">ಆಗ ಗಾದನ ಮಕ್ಕಳೂ, ರೂಬೇನನ ಮಕ್ಕಳೂ ಉತ್ತರವಾಗಿ, “ಯೆಹೋವ ದೇವರು ನಿನ್ನ ಸೇವಕರಿಗೆ ಹೇಳಿದ್ದಂತೆಯೇ ನಾವು ಮಾಡುವೆವು.</verse>
				<verse number="32">ನಾವು ಯುದ್ಧಕ್ಕೆ ಸಿದ್ಧವಾಗಿ ಯೆಹೋವ ದೇವರ ಮುಂದೆ ಕಾನಾನ್ ದೇಶಕ್ಕೆ ದಾಟಿ ಹೋಗುವೆವು. ಆದರೆ ಯೊರ್ದನ್ ನದಿಯ ಈಚೆಯಲ್ಲಿರುವ ನಮ್ಮ ಸೊತ್ತಿನ ಭಾಗವೇ ನಮಗಿರಲಿ,” ಎಂದು ಹೇಳಿದರು.</verse>
				<verse number="33">ಹಾಗೆಯೇ ಮೋಶೆಯು ಗಾದನ ಮಕ್ಕಳಿಗೂ, ರೂಬೇನನ ಮಕ್ಕಳಿಗೂ, ಯೋಸೇಫನ ಮಗನಾದ ಮನಸ್ಸೆಯ ಅರ್ಧ ಗೋತ್ರಕ್ಕೂ, ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ, ಅರಸನಾದ ಓಗನ ರಾಜ್ಯವನ್ನೂ, ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ, ಅದರ ಭೂಮಿಯನ್ನೂ, ಅದರ ಮೇರೆಗಳಲ್ಲಿ ಸುತ್ತಮುತ್ತಲ ಪಟ್ಟಣಗಳನ್ನೂ ಕೊಟ್ಟನು.</verse>
				<verse number="34">ಗಾದನ ಮಕ್ಕಳು ದೀಬೋನ್, ಅಟಾರೋತ್, ಅರೋಯೇರ್,</verse>
				<verse number="35">ಅಟ್ರೋತ್ಷೋಫಾನ್, ಯಜ್ಜೇರ್, ಯೊಗ್ಬೆಹಾ,</verse>
				<verse number="36">ಬೇತ್ ನಿಮ್ರಾ ಮತ್ತು ಬೇತ್ ಹಾರಾನ್ ಎಂಬ ಭದ್ರವಾದ ಪಟ್ಟಣಗಳನ್ನೂ, ಕುರಿಗಳಿಗೆ ಹಟ್ಟಿಗಳನ್ನೂ ಕಟ್ಟಿದರು.</verse>
				<verse number="37">ರೂಬೇನನ ಮಕ್ಕಳು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್,</verse>
				<verse number="38">ನೆಬೋ, ಬಾಳ್ ಮೆಯೋನ್ ಎಂದು ಬೇರೆ ಈ ಹೆಸರು ಹೊಂದಿದ ಈ ಪಟ್ಟಣಗಳನ್ನೂ ಸಿಬ್ಮಾವನ್ನೂ ಕಟ್ಟಿ, ತಾವು ಕಟ್ಟಿದ ಪಟ್ಟಣಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.</verse>
				<verse number="39">ಮನಸ್ಸೆಯ ಮಗ ಮಾಕೀರನ ಮಕ್ಕಳು ಗಿಲ್ಯಾದ್ ದೇಶಕ್ಕೆ ಹೋಗಿ, ಅದನ್ನು ತೆಗೆದುಕೊಂಡು, ಅದರಲ್ಲಿದ್ದ ಅಮೋರಿಯರನ್ನು ಹೊರಡಿಸಿದರು.</verse>
				<verse number="40">ಮೋಶೆಯು ಗಿಲ್ಯಾದನ್ನು ಮನಸ್ಸೆಯ ಮಗ ಮಾಕೀರನಿಗೆ ಕೊಟ್ಟಿದ್ದರಿಂದ, ಅವನು ಅದರಲ್ಲಿ ವಾಸಿಸಿದನು.</verse>
				<verse number="41">ಆದರೆ ಮನಸ್ಸೆಯ ಮಗ ಯಾಯೀರನು ಹೋಗಿ, ಅವರ ನಗರಗಳನ್ನು ತೆಗೆದುಕೊಂಡು, ಅವುಗಳಿಗೆ ಯಾಯೀರನ ಹಳ್ಳಿಗಳೆಂದು ಹೆಸರಿಟ್ಟನು.</verse>
				<verse number="42">ನೋಬಹನು ಹೋಗಿ ಕೆನಾತ್ ಎಂಬ ಪಟ್ಟಣವನ್ನೂ, ಅದರ ಗ್ರಾಮಗಳನ್ನೂ ತೆಗೆದುಕೊಂಡು, ಅದಕ್ಕೆ ತನ್ನ ಹೆಸರಿನ ಹಾಗೆ ನೋಬಹ ಎಂಬ ಹೆಸರಿಟ್ಟನು.</verse>
			</chapter>
			<chapter number="33">
				<verse number="1">ಮೋಶೆ ಆರೋನರ ನಾಯಕತ್ವದಲ್ಲಿ ಈಜಿಪ್ಟ್ ದೇಶದೊಳಗಿಂದ ತಮ್ಮ ಸೈನ್ಯಗಳ ಪ್ರಕಾರ ಹೊರಟ ಇಸ್ರಾಯೇಲರ ಪ್ರಯಾಣದ ಹಂತಗಳ ವಿವರ ಇಲ್ಲಿವೆ.</verse>
				<verse number="2">ಮೋಶೆಯು ಯೆಹೋವ ದೇವರ ಆಜ್ಞೆಯ ಪ್ರಕಾರ ಅವರ ಪ್ರಯಾಣದಲ್ಲಿ ತಂಗಿದ್ದ ಸ್ಥಳಗಳ ವಿವರಗಳನ್ನು ಬರೆದನು.</verse>
				<verse number="3">ಅವರ ಪ್ರಯಾಣಗಳ ವಿವರಗಳು ಯಾವುವೆಂದರೆ: ಅವರು ಮೊದಲನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪಸ್ಕಹಬ್ಬದ ಮರುದಿನ ಇಸ್ರಾಯೇಲರು ಸಮಸ್ತ ಈಜಿಪ್ಟನವರ ಎದುರಿನಲ್ಲೇ ಅಟ್ಟಹಾಸದಿಂದ ರಮ್ಸೇಸಿನಿಂದ ಹೊರಟು ಹೋದರು.</verse>
				<verse number="4">ಹೇಗೆಂದರೆ ಆ ಕಾಲದಲ್ಲಿ ಯೆಹೋವ ದೇವರು ಈಜಿಪ್ಟಿನವರ ಸಮಸ್ತ ಚೊಚ್ಚಲಿನವರನ್ನು ಹೊಡೆದು ಆ ಮಕ್ಕಳ ಶವಗಳನ್ನು ಹೂಣಿಟ್ಟರು, ಯೆಹೋವ ದೇವರು ಅವರ ದೇವರುಗಳಿಗೂ ಶಿಕ್ಷೆ ಮಾಡಿದರು.</verse>
				<verse number="5">ಇಸ್ರಾಯೇಲರು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದರು.</verse>
				<verse number="6">ಸುಕ್ಕೋತಿನಿಂದ ಹೊರಟು ಮರುಭೂಮಿಯ ಮೇರೆಯಲ್ಲಿರುವ ಏತಾಮಿನಲ್ಲಿ ಇಳಿದುಕೊಂಡರು.</verse>
				<verse number="7">ಏತಾಮಿನಿಂದ ಹೊರಟು ಬಾಲ್ಜೆಫೋನಿಗೆ ಎದುರಾಗಿರುವ ಪೀಹಹೀರೋತಿಗೆ ತಿರುಗಿಕೊಂಡು, ಮಿಗ್ದೋಲಿಗೆ ಎದುರಾಗಿ ಇಳಿದುಕೊಂಡರು.</verse>
				<verse number="8">ಪೀಹಹೀರೋತಿನಿಂದ ಹೊರಟು ಸಮುದ್ರದೊಳಗಿಂದ ಮರುಭೂಮಿಗೆ ದಾಟಿದರು. ಆಗ ಅವರು ಮೂರು ದಿವಸದ ಪ್ರಯಾಣಮಾಡಿ ಏತಾಮೆಂಬ ಮರುಭೂಮಿಯಲ್ಲಿ ನಡೆದು ಮಾರಾದಲ್ಲಿ ಇಳಿದರು.</verse>
				<verse number="9">ಮಾರಾದಿಂದ ಹೊರಟು ಏಲೀಮಿಗೆ ಬಂದರು. ಎಲೀಮಿನಲ್ಲಿ ಹನ್ನೆರಡು ನೀರಿನ ಒರತೆಗಳೂ, ಎಪ್ಪತ್ತು ಖರ್ಜೂರ ಮರಗಳೂ ಇದ್ದುದರಿಂದ ಅಲ್ಲಿ ಇಳಿದುಕೊಂಡರು.</verse>
				<verse number="10">ಏಲೀಮಿನಿಂದ ಹೊರಟು ಕೆಂಪುಸಮುದ್ರದ ಬಳಿಯಲ್ಲಿ ಇಳಿದುಕೊಂಡರು.</verse>
				<verse number="11">ಕೆಂಪು ಸಮುದ್ರದಿಂದ ಹೊರಟು ಸೀನೆಂಬ ಮರುಭೂಮಿಯಲ್ಲಿ ಇಳಿದುಕೊಂಡು,</verse>
				<verse number="12">ಸೀನೆಂಬ ಮರುಭೂಮಿಯಿಂದ ಹೊರಟು ದೊಫ್ಕದಲ್ಲಿ ಇಳಿದುಕೊಂಡರು.</verse>
				<verse number="13">ದೊಫ್ಕದಿಂದ ಹೊರಟು ಆಲೂಷದಲ್ಲಿ ಇಳಿದುಕೊಂಡರು.</verse>
				<verse number="14">ಆಲೂಷದಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಆದರೆ ಅಲ್ಲಿ ಜನರಿಗೆ ಕುಡಿಯುವುದಕ್ಕೆ ನೀರು ಇರಲಿಲ್ಲ.</verse>
				<verse number="15">ರೆಫೀದೀಮಿನಿಂದ ಹೊರಟು ಸೀನಾಯಿ ಮರುಭೂಮಿಯಲ್ಲಿ ಇಳಿದುಕೊಂಡರು.</verse>
				<verse number="16">ಸೀನಾಯಿ ಮರುಭೂಮಿಯಿಂದ ಹೊರಟು ಕಿಬ್ರೋತ್ ಹತಾವದಲ್ಲಿ ಇಳಿದುಕೊಂಡರು.</verse>
				<verse number="17">ಕಿಬ್ರೋತ್ ಹತಾವದಿಂದ ಹೊರಟು ಹಚೇರೋತಿನಲ್ಲಿ ಇಳಿದುಕೊಂಡರು.</verse>
				<verse number="18">ಹಚೇರೋತಿನಿಂದ ಹೊರಟು ರಿತ್ಮದಲ್ಲಿ ಇಳಿದುಕೊಂಡರು.</verse>
				<verse number="19">ರಿತ್ಮದಿಂದ ಹೊರಟು ರಿಮ್ಮೋನ್ ಪೆರೆಚಿನಲ್ಲಿ ಇಳಿದುಕೊಂಡರು.</verse>
				<verse number="20">ರಿಮ್ಮೋನ್ ಪೆರೆಚಿನಿಂದ ಹೊರಟು ಲಿಬ್ನದಲ್ಲಿ ಇಳಿದುಕೊಂಡರು.</verse>
				<verse number="21">ಲಿಬ್ನದಿಂದ ಹೊರಟು ರಿಸ್ಸದಲ್ಲಿ ಇಳಿದುಕೊಂಡರು.</verse>
				<verse number="22">ರಿಸ್ಸದಿಂದ ಹೊರಟು ಕೆಹೇಲಾತಾನಲ್ಲಿ ಇಳಿದುಕೊಂಡರು.</verse>
				<verse number="23">ಕೆಹೇಲಾತಾನಿಂದ ಹೊರಟು ಶೆಫೆರ್ ಪರ್ವತದಲ್ಲಿ ಇಳಿದುಕೊಂಡರು.</verse>
				<verse number="24">ಶೆಫೆರ್ ಪರ್ವತದಿಂದ ಹೊರಟು ಹರಾದಾದಲ್ಲಿ ಇಳಿದುಕೊಂಡರು.</verse>
				<verse number="25">ಹರಾದಾದಿಂದ ಹೊರಟು ಮಖೇಲೋತಿನಲ್ಲಿ ಇಳಿದುಕೊಂಡರು.</verse>
				<verse number="26">ಮಖೇಲೋತಿನಿಂದ ಹೊರಟು ತಹತಿನಲ್ಲಿ ಇಳಿದುಕೊಂಡರು.</verse>
				<verse number="27">ತಹತಿನಿಂದ ಹೊರಟು ತೆರಹದಲ್ಲಿ ಇಳಿದುಕೊಂಡರು.</verse>
				<verse number="28">ತೆರಹದಿಂದ ಹೊರಟು ಮಿತ್ಕಾದಲ್ಲಿ ಇಳಿದುಕೊಂಡರು.</verse>
				<verse number="29">ಮಿತ್ಕಾದಿಂದ ಹೊರಟು ಹಷ್ಮೋನಾದಲ್ಲಿ ಇಳಿದುಕೊಂಡರು.</verse>
				<verse number="30">ಹಷ್ಮೋನಾದಿಂದ ಹೊರಟು ಮೋಸೇರೋತಿನಲ್ಲಿ ಇಳಿದುಕೊಂಡರು.</verse>
				<verse number="31">ಮೋಸೇರೋತಿನಿಂದ ಹೊರಟು ಬೆನೇಯಾಕಾನಿನಲ್ಲಿ ಇಳಿದುಕೊಂಡರು.</verse>
				<verse number="32">ಬೆನೇಯಾಕಾನಿನಿಂದ ಹೊರಟು ಹೋರ್ಹಗಿದ್ಗಾದಿನಲ್ಲಿ ಇಳಿದುಕೊಂಡರು.</verse>
				<verse number="33">ಹೋರ್ಹಗಿದ್ಗಾದಿನಿಂದ ಹೊರಟು ಯೊಟ್ಬಾತದಲ್ಲಿ ಇಳಿದುಕೊಂಡರು.</verse>
				<verse number="34">ಯೊಟ್ಬಾತದಿಂದ ಹೊರಟು ಅಬ್ರೋನಾದಲ್ಲಿ ಇಳಿದುಕೊಂಡರು.</verse>
				<verse number="35">ಅಬ್ರೋನಾದಿಂದ ಹೊರಟು ಎಚ್ಯೋನ್ ಗೆಬೆರಿನಲ್ಲಿ ಇಳಿದುಕೊಂಡರು.</verse>
				<verse number="36">ಎಚ್ಯೋನ್ ಗೆಬೆರಿನಿಂದ ಹೊರಟು ಕಾದೇಶೆಂಬ ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು.</verse>
				<verse number="37">ಕಾದೇಶಿನಿಂದ ಹೊರಟು ಎದೋಮ್ ದೇಶದ ಅಂತ್ಯದಲ್ಲಿರುವ ಹೋರ್ ಗುಡ್ಡದಲ್ಲಿ ಇಳಿದುಕೊಂಡರು.</verse>
				<verse number="38">ಆಗ ಯಾಜಕನಾದ ಆರೋನನು ಯೆಹೋವ ದೇವರ ಆಜ್ಞೆಯ ಪ್ರಕಾರ ಹೋರ್ ಗುಡ್ಡದ ಮೇಲೆ ಏರಿ, ಅಲ್ಲಿ ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ನಾಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ನಿಧನ ಹೊಂದಿದನು.</verse>
				<verse number="39">ಆರೋನನು ಹೋರ್ ಗುಡ್ಡದಲ್ಲಿ ಮರಣಹೊಂದಿದಾಗ ಅವನು ನೂರ ಇಪ್ಪತ್ತಮೂರು ವರ್ಷದವನಾಗಿದ್ದನು.</verse>
				<verse number="40">ಆಗ ಕಾನಾನ್ ದೇಶದ ನೆಗೆವನಲ್ಲಿ ವಾಸವಾಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಇಸ್ರಾಯೇಲರು ಬರುವುದನ್ನು ಕೇಳಿದನು.</verse>
				<verse number="41">ಹೋರ್ ಗುಡ್ಡದಿಂದ ಅವರು ಹೊರಟು ಚಲ್ಮೋನದಲ್ಲಿ ಇಳಿದುಕೊಂಡರು.</verse>
				<verse number="42">ಚಲ್ಮೋನದಿಂದ ಹೊರಟು ಪೂನೋನಿನಲ್ಲಿ ಇಳಿದುಕೊಂಡರು.</verse>
				<verse number="43">ಪೂನೋನಿನಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.</verse>
				<verse number="44">ಓಬೋತಿನಿಂದ ಹೊರಟು ಮೋವಾಬಿನ ಮೇರೆಯಲ್ಲಿರುವ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು.</verse>
				<verse number="45">ಇಯೀಮಿನಿಂದ ಹೊರಟು ದೀಬೋನ್ ಗಾದಿನಲ್ಲಿ ಇಳಿದುಕೊಂಡರು.</verse>
				<verse number="46">ದೀಬೋನ್ ಗಾದಿನಿಂದ ಹೊರಟು ಅಲ್ಮೋನ್ ದಿಬ್ಲಾತಯಿಮಿನಲ್ಲಿ ಇಳಿದುಕೊಂಡರು.</verse>
				<verse number="47">ಅಲ್ಮೋನ್ ದಿಬ್ಲಾತಯಿಮಿನಿಂದ ಹೊರಟು ನೆಬೋವಿನ ಪೂರ್ವದಲ್ಲಿರುವ ಅಬಾರೀಮ್ ಬೆಟ್ಟಗಳಲ್ಲಿ ಇಳಿದುಕೊಂಡರು.</verse>
				<verse number="48">ಅಬಾರೀಮ್ ಬೆಟ್ಟಗಳಿಂದ ಹೊರಟು ಯೆರಿಕೋವಿಗೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಇಳಿದುಕೊಂಡರು.</verse>
				<verse number="49">ಅವರು ಯೊರ್ದನ್ ನದಿಯ ಬಳಿಯಲ್ಲಿರುವ ಬೇತ್ ಯೆಷೀಮೋತಿನಿಂದ ಮೋವಾಬಿನ ಬಯಲುಗಳಲ್ಲಿರುವ ಆಬೇಲ್ ಶಿಟ್ಟೀಮಿನ ಪರ್ಯಂತರದವರೆಗೂ ಇಳಿದುಕೊಂಡರು.</verse>
				<verse number="50">ಯೆಹೋವ ದೇವರು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ,</verse>
				<verse number="51">“ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನೀವು ಯೊರ್ದನನ್ನು ದಾಟಿ, ಕಾನಾನ್ ದೇಶಕ್ಕೆ ಬರುವಾಗ,</verse>
				<verse number="52">ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ, ಅವರ ಚಿತ್ರಗಳನ್ನೂ ಅವರು ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ, ಅವರ ಸಮಸ್ತ ಪವಿತ್ರ ಸ್ಥಳಗಳನ್ನೂ ಹಾಳುಮಾಡಬೇಕು.</verse>
				<verse number="53">ನೀವು ಆ ದೇಶವನ್ನು ತೆಗೆದುಕೊಂಡು ಅದರಲ್ಲಿ ವಾಸಮಾಡಿರಿ. ಏಕೆಂದರೆ ಅದನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ.</verse>
				<verse number="54">ನೀವು ದೇಶವನ್ನು ನಿಮ್ಮ ಗೋತ್ರಗಳ ಪ್ರಕಾರ ಚೀಟುಹಾಕಿ, ಸ್ವಾಧೀನಮಾಡಿ ಹಂಚಿಕೊಳ್ಳಬೇಕು. ಹೆಚ್ಚಾದವರಿಗೆ ಸೊತ್ತನ್ನು ಹೆಚ್ಚಿಸಿ, ಕಡಿಮೆಯಾದವರಿಗೆ ಸೊತ್ತನ್ನು ಕಡಿಮೆ ಮಾಡಬೇಕು. ಒಬ್ಬೊಬ್ಬನಿಗೆ ಚೀಟು ಎಲ್ಲಿ ಬೀಳುವುದೋ, ಅದೇ ಅವನಿಗಾಗಬೇಕು. ನಿಮ್ಮ ಪಿತೃಗಳ ಗೋತ್ರದ ಪ್ರಕಾರ ನೀವು ಸ್ವಾಧೀನಮಾಡಿಕೊಳ್ಳಬೇಕು.</verse>
				<verse number="55">“ ‘ಆದರೆ ನೀವು ನಿಮ್ಮ ಮುಂದೆ ದೇಶದ ನಿವಾಸಿಗಳನ್ನು ಹೊರಡಿಸದಿದ್ದರೆ, ನೀವು ಉಳಿಸಿದವರು ನಿಮ್ಮ ಕಣ್ಣುಗಳಲ್ಲಿ ಮುಳ್ಳುಗಳಾಗಿಯೂ, ನಿಮ್ಮ ಪಕ್ಕೆಗಳಲ್ಲಿ ಕಂಟಕಗಳಾಗಿಯೂ ಇರುವರು. ನೀವು ವಾಸಿಸುವ ದೇಶದಲ್ಲಿ ಅವರು ನಿಮ್ಮನ್ನು ಶ್ರಮೆಪಡಿಸುವರು.</verse>
				<verse number="56">ಇದಲ್ಲದೆ ನಾನು ಅವರಿಗೆ ಮಾಡಬೇಕೆಂದಿದ್ದ ಹಾಗೆ ನಿಮಗೆ ಮಾಡುವೆನು.’ ”</verse>
			</chapter>
			<chapter number="34">
				<verse number="1">ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,</verse>
				<verse number="2">“ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ, ಅವರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಕಾನಾನ್ ದೇಶದೊಳಗೆ ಬರುವಾಗ, ನಿಮಗೆ ಸೊತ್ತಾಗಿ ಬರುವ ಕಾನಾನ್ ದೇಶವು ಅದರ ಮೇರೆಗಳ ಪ್ರಕಾರ ಹೀಗಿರಬೇಕು.</verse>
				<verse number="3">“ ‘ನಿಮ್ಮ ದಕ್ಷಿಣ ಕಡೆಯು ಚಿನ್ ಮರುಭೂಮಿಯಿಂದ ಎದೋಮಿಗೆ ಅನುಸಾರವಾಗಿರಬೇಕು. ನಿಮ್ಮ ದಕ್ಷಿಣ ಮೇರೆಯು, ಉಪ್ಪಿನ ಸಮುದ್ರದ ಪೂರ್ವದ ಕಡೆಯಿಂದ ಆರಂಭಿಸಬೇಕು.</verse>
				<verse number="4">ನಿಮ್ಮ ಮೇರೆಯು ದಕ್ಷಿಣದಿಂದ ಅಕ್ರಬ್ಬೀಮ್ ದಿನ್ನೆಗೆ ತಿರುಗಿ, ಚಿನ್‌ಗೆ ಹಾದು, ಕಾದೇಶ್ ಬರ್ನೇಯಕ್ಕೆ ದಕ್ಷಿಣದಲ್ಲಿ ಮುಗಿದು, ಅಲ್ಲಿಂದ ಹಚರದ್ದಾರಿಗೆ ಹೊರಟು, ಅಚ್ಮೋನಿಗೆ ಹಾದು ಹೋಗಬೇಕು.</verse>
				<verse number="5">ಅಚ್ಮೋನಿನಿಂದ ಈಜಿಪ್ಟಿನ ಹಳ್ಳಕ್ಕೆ ತಿರುಗಿ ಸಮುದ್ರ ತೀರದಲ್ಲಿ ಮುಗಿಯಬೇಕು.</verse>
				<verse number="6">ಪಶ್ಚಿಮದಲ್ಲಿ ದೊಡ್ಡ ಸಮುದ್ರವೇ ನಿಮಗೆ ಮೇರೆಯಾಗಿರಬೇಕು. ಇದೇ ನಿಮ್ಮ ಪಶ್ಚಿಮ ಮೇರೆಯಾಗಿರುವುದು.</verse>
				<verse number="7">ನಿಮ್ಮ ಉತ್ತರ ಮೇರೆ ಯಾವುದೆಂದರೆ ನೀವು ದೊಡ್ಡ ಸಮುದ್ರದಿಂದ ಹೋರ್ ಪರ್ವತದವರೆಗೂ,</verse>
				<verse number="8">ಸಾಲು ಮಾಡಿಕೊಂಡು ಹೋರ್ ಪರ್ವತದಿಂದ ನೀವು ಲೆಬೊ ಹಮಾತಿನ ಪ್ರದೇಶದವರೆಗೆ ಸಾಲು ಮಾಡಿರಿ. ಮೇರೆಯು ಚೆದಾದಿಗೆ ಹೊರಟು</verse>
				<verse number="9">ಜಿಫ್ರೋನಿಗೆ ಹೋಗಿ, ಹಚರ್ ಏನಾನಿನಲ್ಲಿ ಮುಗಿಯಲಿ. ಇದು ನಿಮ್ಮ ಉತ್ತರ ಮೇರೆ.</verse>
				<verse number="10">ಪೂರ್ವದ ಮೇರೆಗೋಸ್ಕರ ಹಚರ್ ಏನಾನಿನಿಂದ ಶೆಫಾಮಿಗೆ ಸಾಲು ಮಾಡಿಕೊಳ್ಳಿರಿ.</verse>
				<verse number="11">ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಾಕ್ಕೆ ಇಳಿದು, ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.</verse>
				<verse number="12">ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರವಾಗಿ ಇಳಿದು, ಉಪ್ಪಿನ ಸಮುದ್ರದಲ್ಲಿ ಮುಗಿಯುವುದು. “ ‘ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.’ ”</verse>
				<verse number="13">ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿ, “ನೀವು ಚೀಟುಹಾಕಿ ಸ್ವಾಧೀನಪಡಿಸಿಕೊಳ್ಳಬೇಕಾದ ದೇಶವು ಒಂಬತ್ತುವರೆ ಗೋತ್ರಗಳಿಗೆ ಕೊಡಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ ದೇಶವು ಇದೇ.</verse>
				<verse number="14">ಏಕೆಂದರೆ ರೂಬೇನ್ಯರ ಮಕ್ಕಳ ಗೋತ್ರವೂ, ಗಾದನ ಮಕ್ಕಳ ಗೋತ್ರವೂ, ಮನಸ್ಸೆಯ ಅರ್ಧ ಗೋತ್ರವೂ ತಮ್ಮ ಪಿತೃಗಳ ಮನೆಯ ಪ್ರಕಾರವಾಗಿ ತಮ್ಮ ಸೊತ್ತನ್ನು ಪಡೆದುಕೊಂಡಿದ್ದಾರೆ.</verse>
				<verse number="15">ಎರಡೂವರೆ ಗೋತ್ರಗಳು ತಮ್ಮ ಸೊತ್ತನ್ನು ಯೊರ್ದನಿನ ಈಚೆಯಲ್ಲಿ ಯೆರಿಕೋವಿಗೆ ಸೂರ್ಯನು ಉದಯಿಸುವ ಪೂರ್ವದಿಕ್ಕಿನಲ್ಲಿ ಪಡೆದುಕೊಂಡಿದ್ದಾರೆ,” ಎಂದನು.</verse>
				<verse number="16">ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,</verse>
				<verse number="17">“ದೇಶವನ್ನು ನಿಮಗೆ ಹಂಚಬೇಕಾದ ಜನರ ಹೆಸರುಗಳು ಇವೇ. ಯಾಜಕನಾದ ಎಲಿಯಾಜರನೂ, ನೂನನ ಮಗ ಯೆಹೋಶುವನೂ</verse>
				<verse number="18">ದೇಶದ ಸೊತ್ತನ್ನು ಹಂಚುವುದಕ್ಕೆ ನೀವು ಒಂದೊಂದು ಗೋತ್ರದಿಂದ ಒಬ್ಬೊಬ್ಬ ಪ್ರಧಾನನನ್ನು ತೆಗೆದುಕೊಳ್ಳಿರಿ.</verse>
				<verse number="19">“ಈ ಜನರ ಹೆಸರುಗಳು ಇವೇ. “ಯೆಹೂದನ ಕುಟುಂಬದಿಂದ ಯೆಫುನ್ನೆಯ ಮಗ ಕಾಲೇಬನೂ,</verse>
				<verse number="20">ಸಿಮೆಯೋನನ ಮಕ್ಕಳ ಗೋತ್ರದಿಂದ ಅಮ್ಮೀಹೂದನ ಮಗ ಶಮುವೇಲನೂ,</verse>
				<verse number="21">ಬೆನ್ಯಾಮೀನನ ಗೋತ್ರದಿಂದ ಕಿಸ್ಲೋನನ ಮಗ ಎಲೀದಾದ್,</verse>
				<verse number="22">ದಾನನ ಮಕ್ಕಳ ಗೋತ್ರದ ಪ್ರಧಾನನು, ಯೊಗ್ಲೀಯ ಮಗ ಬುಕ್ಕೀ,</verse>
				<verse number="23">ಯೋಸೇಫನ ಮಕ್ಕಳಾದ ಮನಸ್ಸೆಯ ಗೋತ್ರದ ಪ್ರಧಾನನು ಏಫೋದನ ಮಗ ಹನ್ನೀಯೇಲನೂ,</verse>
				<verse number="24">ಎಫ್ರಾಯೀಮ್ ಮಕ್ಕಳ ಗೋತ್ರದ ಪ್ರಧಾನನು ಶಿಫ್ಟಾನನ ಮಗ ಕೆಮೂಯೇಲನೂ,</verse>
				<verse number="25">ಜೆಬುಲೂನನ ಮಕ್ಕಳ ಗೋತ್ರದ ಪ್ರಧಾನನು ಪರ್ನಾಕನ ಮಗ ಎಲೀಚಾಫಾನ್,</verse>
				<verse number="26">ಇಸ್ಸಾಕಾರನ ಮಕ್ಕಳ ಗೋತ್ರದ ಪ್ರಧಾನನು ಅಜ್ಜಾನನ ಮಗ ಪಲ್ಟೀಯೇಲನೂ,</verse>
				<verse number="27">ಆಶೇರನ ಮಕ್ಕಳ ಗೋತ್ರದ ಪ್ರಧಾನನು ಶೆಲೋಮಿಯ ಮಗ ಅಹೀಹೂದನೂ,</verse>
				<verse number="28">ನಫ್ತಾಲಿಯ ಮಕ್ಕಳ ಗೋತ್ರದ ಪ್ರಧಾನನು ಅಮ್ಮೀಹೂದನ ಮಗ ಪೆದಹೇಲನೂ.”</verse>
				<verse number="29">ಕಾನಾನ್ ದೇಶದಲ್ಲಿ ಇಸ್ರಾಯೇಲರಿಗೆ ಸೊತ್ತನ್ನು ಹಂಚುವುದಕ್ಕೆ ಯೆಹೋವ ದೇವರು ನೇಮಿಸಿದ ಮನುಷ್ಯರು ಇವರೇ.</verse>
			</chapter>
			<chapter number="35">
				<verse number="1">ಯೆಹೋವ ದೇವರು ಯೆರಿಕೋವಿಗೆ ಎದುರಾಗಿ ಯೊರ್ದನಿನ ಬಳಿಯಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಸಂಗಡ ಮಾತನಾಡಿ,</verse>
				<verse number="2">“ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ಅವರು ತಮ್ಮ ಸ್ವಾಸ್ತ್ಯದ ಭಾಗದಿಂದ ಲೇವಿಯರಿಗೆ ವಾಸಮಾಡುವುದಕ್ಕೆ ಕೆಲವು ಪಟ್ಟಣಗಳನ್ನು ಕೊಡಬೇಕು. ಪಟ್ಟಣಗಳ ಸುತ್ತಮುತ್ತಲಿರುವ ಹುಲ್ಲುಗಾವಲು ಪ್ರದೇಶಗಳನ್ನು ನೀವು ಲೇವಿಯರಿಗೆ ಕೊಡಬೇಕು.</verse>
				<verse number="3">ನಂತರ ಅವರು ವಾಸಮಾಡುವದಕ್ಕೆ ಪಟ್ಟಣಗಳು, ಅವರು ಹೊಂದಿರುವ ಪಶುಗಳಿಗೋಸ್ಕರವೂ ಮತ್ತು ಅವರ ಎಲ್ಲಾ ಇತರ ಪ್ರಾಣಿಗಳಿಗೂ ಹುಲ್ಲುಗಾವಲು ಪ್ರದೇಶಗಳನ್ನು ಹೊಂದಿರುತ್ತಾರೆ.</verse>
				<verse number="4">“ನೀವು ಲೇವಿಯರಿಗೆ ಕೊಡಬೇಕಾದ ಪಟ್ಟಣಗಳ ಉಪನಗರಗಳು, ಪಟ್ಟಣದ ಗೋಡೆಯಿಂದ ಸುತ್ತಲೂ ಸಾವಿರ ಮೊಳ ಅಗಲವಾಗಿರಬೇಕು.</verse>
				<verse number="5">ನೀವು ಪಟ್ಟಣದ ಹೊರಗೆ ಪೂರ್ವದಲ್ಲಿ ಎರಡು ಸಾವಿರ ಮೊಳ, ದಕ್ಷಿಣದಲ್ಲಿ ಎರಡು ಸಾವಿರ ಮೊಳ, ಪಶ್ಚಿಮದಲ್ಲಿ ಎರಡು ಸಾವಿರ ಮೊಳ, ಉತ್ತರದಲ್ಲಿ ಎರಡು ಸಾವಿರ ಮೊಳ ಅಳೆಯಬೇಕು. ಮಧ್ಯದಲ್ಲಿ ಪಟ್ಟಣವಿರಬೇಕು. ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.</verse>
				<verse number="6">“ನೀವು ಲೇವಿಯರಿಗೆ ಕೊಡುವ ಪಟ್ಟಣಗಳೊಳಗೆ ಮನುಷ್ಯ ಹತ್ಯೆ ಮಾಡಿದವನು ಅಲ್ಲಿಗೆ ಓಡುವ ಹಾಗೆ ಆರು ಆಶ್ರಯದ ಪಟ್ಟಣಗಳನ್ನು ನೇಮಿಸಬೇಕು. ಅವುಗಳ ಹೊರತು ನೀವು ನಲವತ್ತೆರಡು ಪಟ್ಟಣಗಳನ್ನು ಕೊಡಬೇಕು.</verse>
				<verse number="7">ನೀವು ಲೇವಿಯರಿಗೆ ಕೊಡಬೇಕಾದ ಸಮಸ್ತ ಪಟ್ಟಣಗಳು, ಅವುಗಳ ಉಪನಗರಗಳ ಸಂಗಡ ನಲವತ್ತೆಂಟು ಪಟ್ಟಣಗಳಾಗಿರಬೇಕು.</verse>
				<verse number="8">ನೀವು ಇಸ್ರಾಯೇಲರ ಸ್ವಾಧೀನದಿಂದ ಕೊಡುವ ಪಟ್ಟಣಗಳನ್ನು ಹೆಚ್ಚಾದವರ ಕಡೆಯಿಂದ ಹೆಚ್ಚಾಗಿ, ಕಡಿಮೆಯಾದವರ ಕಡೆಯಿಂದ ಕಡಿಮೆಯಾಗಿ ತೆಗೆದುಕೊಳ್ಳಬೇಕು. ಒಬ್ಬೊಬ್ಬನು ತಾನು ಹೊಂದುವ ಸೊತ್ತಿಗನುಸಾರವಾಗಿ ತನ್ನ ಪಟ್ಟಣಗಳೊಳಗಿಂದ ಲೇವಿಯರಿಗೆ ಕೊಡಬೇಕು,” ಎಂದು ಹೇಳಿದರು.</verse>
				<verse number="9">ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,</verse>
				<verse number="10">“ನೀನು ಇಸ್ರಾಯೇಲರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ನೀವು ಯೊರ್ದನನ್ನು ದಾಟಿ, ಕಾನಾನ್ ದೇಶಕ್ಕೆ ಬರುವಾಗ,</verse>
				<verse number="11">ಕೈತಪ್ಪಿ ಒಬ್ಬನನ್ನು ಕೊಂದರೆ, ನೀವು ಓಡಿಹೋಗುವ ಹಾಗೆ ನಿಮಗೆ ಆಶ್ರಯಕ್ಕಾಗಿ ಪಟ್ಟಣಗಳನ್ನು ನೇಮಿಸಬೇಕು.</verse>
				<verse number="12">ಕೊಂದವನು ಸಭೆಯ ಮುಂದೆ ನ್ಯಾಯತೀರ್ಪಿಗೆ ನಿಲ್ಲುವವರೆಗೂ ಸೇಡು ತೀರಿಸುವವನ ದೆಸೆಯಿಂದ ಸಾಯದಂತೆ ಅವು ನಿಮಗೆ ಆಶ್ರಯದ ಪಟ್ಟಣಗಳಾಗಿರಬೇಕು.</verse>
				<verse number="13">ನೀವು ಕೊಡುವ ಪಟ್ಟಣಗಳೊಳಗೆ ಆರು ಆಶ್ರಯದ ಪಟ್ಟಣಗಳು ಇರಬೇಕು.</verse>
				<verse number="14">ಯೊರ್ದನಿನ ಈಚೆಯಲ್ಲಿ ಮೂರು ಪಟ್ಟಣಗಳನ್ನು ಮತ್ತು ಕಾನಾನ್ ದೇಶದಲ್ಲಿ ಮೂರು ಪಟ್ಟಣಗಳನ್ನು ಆಶ್ರಯದ ಪಟ್ಟಣಗಳಾಗಿ ಕೊಡಬೇಕು.</verse>
				<verse number="15">ಕೈತಪ್ಪಿ ಪ್ರಾಣಹತ್ಯೆ ಮಾಡುವವರೆಲ್ಲರೂ, ಅಲ್ಲಿಗೆ ಓಡಿಹೋಗುವುದಕ್ಕೆ ಈ ಆರು ಪಟ್ಟಣಗಳು ಇಸ್ರಾಯೇಲರಿಗೂ, ಪರಕೀಯರಿಗಾಗಿ ಅವರಲ್ಲಿ ವಾಸಮಾಡುವವರಿಗೂ ಆಶ್ರಯಕ್ಕಾಗಿ ಇರಬೇಕು.</verse>
				<verse number="16">“ ‘ಒಬ್ಬನು ಕಬ್ಬಿಣದಿಂದ ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ, ಅವನು ಕೊಲೆಪಾತಕನು. ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.</verse>
				<verse number="17">ಒಬ್ಬನು ಸಾಯುವಂತೆ ಕಲ್ಲನ್ನು ಎಸೆದು ಮತ್ತೊಬ್ಬನನ್ನು ಸಾಯುವ ಹಾಗೆ ಹೊಡೆದರೆ, ಅವನು ಕೊಲೆಪಾತಕನು. ಆ ಕೊಲೆಪಾತಕನನ್ನು ನಿಜವಾಗಿಯೂ ಸಾಯಿಸಬೇಕು.</verse>
				<verse number="18">ಇಲ್ಲವೆ ಯಾರಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದುಕೊಂದರೆ, ಆ ವ್ಯಕ್ತಿಯು ಕೊಲೆಗಾರ; ಆ ಕೊಲೆಪಾತಕನಿಗೆ ನಿಜವಾಗಿಯೂ ಮರಣಶಿಕ್ಷೆಯಾಗಬೇಕು.</verse>
				<verse number="19">ರಕ್ತಪಾತಕ್ಕೆ ಸೇಡು ತೀರಿಸಿಕೊಳ್ಳುವವನು ಕೊಲೆಪಾತಕನನ್ನು ಕೊಲ್ಲಬೇಕು. ಅವನು ಕೊಲೆಪಾತಕನನ್ನು ನೋಡಿದಾಗ, ಅವನನ್ನೂ ಕೊಲ್ಲಬೇಕು.</verse>
				<verse number="20">ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ಸಾಯುವ ಹಾಗೆ ಹೊಡೆದರೆ, ಇಲ್ಲವೆ ನೂಕುವುದರಿಂದಲಾದರೂ, ಸಮಯ ನೋಡಿಕೊಂಡು ಅವನ ಮೇಲೆ ಯಾವುದನ್ನಾದರೂ ಬಲವಾಗಿ ಎಸೆದರೆ,</verse>
				<verse number="21">ಇಲ್ಲವೆ ಹಗೆತನ ಮಾಡಿ ಅವನು ಸಾಯುವ ಹಾಗೆ ತನ್ನ ಕೈಯಿಂದ ಹೊಡೆದರೆ ಅವನು ಕೊಲೆಪಾತಕನೇ, ಹೊಡೆದವನನ್ನು ನಿಜವಾಗಿ ಸಾಯಿಸಬೇಕು. ರಕ್ತಪಾತಕ್ಕೆ ಸೇಡು ತೀರಿಸುವವನು ಅವನನ್ನು ಸಂಧಿಸುವಾಗಲೇ ಆ ಕೊಲೆಪಾತಕನನ್ನು ಕೊಲ್ಲಬೇಕು.</verse>
				<verse number="22">“ ‘ಆದರೆ ಶತ್ರುತ್ವವಿಲ್ಲದೆ ಆಕಸ್ಮಿಕವಾಗಿ ಅವನನ್ನು ನೂಕುವುದರಿಂದಲಾದರೂ, ಸಮಯ ಸಾಧಿಸದೆ ಯಾವುದಾದರೊಂದು ವಸ್ತುವನ್ನು ಅವನ ಮೇಲೆ ಎಸೆದರೆ,</verse>
				<verse number="23">ಇಲ್ಲವೆ ಶತ್ರುತ್ವವಿಲ್ಲದೆ ಅವನ ಕೇಡನ್ನು ಹುಡುಕದೆ ಅವನನ್ನು ನೋಡದೆ ಮರಣವಾಗುವಂತೆ ಯಾವುದಾದರೊಂದು ಕಲ್ಲನ್ನು ಅವನು ಸಾಯುವ ಹಾಗೆ ಅವನ ಮೇಲೆ ಬೀಳ ಮಾಡಿದರೆ,</verse>
				<verse number="24">ಆಗ ಸಭೆಯು ಈ ನ್ಯಾಯಗಳ ಪ್ರಕಾರ ಕೊಲ್ಲುವವನಿಗೂ, ರಕ್ತಪಾತಕ್ಕೆ ಸೇಡು ತೀರಿಸುವವನಿಗೂ ನ್ಯಾಯತೀರಿಸಬೇಕು.</verse>
				<verse number="25">ಸಭೆಯು ಕೊಂದವನನ್ನು ರಕ್ತದ ಸೇಡು ತೀರಿಸುವವನ ಕೈಯಿಂದ ತಪ್ಪಿಸಿ, ಅವನು ಓಡಿ ಹೋದ ಆಶ್ರಯದ ಪಟ್ಟಣಕ್ಕೆ ತಿರುಗಿ ಸೇರಿಸಬೇಕು. ಅಲ್ಲೇ ಅವನು ಪರಿಶುದ್ಧ ಎಣ್ಣೆಯಿಂದ ಅಭಿಷೇಕ ಹೊಂದಿದ ಮಹಾಯಾಜಕನು ಸಾಯುವವರೆಗೂ ವಾಸಮಾಡಲಿ.</verse>
				<verse number="26">“ ‘ಆದರೆ ಕೊಲೆಪಾತಕನು ತಾನು ಓಡಿ ಹೋದ ಆಶ್ರಯದ ಪಟ್ಟಣದ ಮೇರೆಯನ್ನು ಯಾವ ಸಮಯದಲ್ಲಾದರೂ ಮೀರಿ ಹೊರಟರೆ,</verse>
				<verse number="27">ರಕ್ತಕ್ಕೆ ಸೇಡು ತೀರಿಸುವವನು ಅವನನ್ನು ತನ್ನ ಆಶ್ರಯದ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಲೆಪಾತಕನನ್ನು ಕೊಂದರೆ, ಅವನಿಗೆ ರಕ್ತಾಪರಾಧವಿಲ್ಲ.</verse>
				<verse number="28">ಏಕೆಂದರೆ ಅವನು ತನ್ನ ಆಶ್ರಯದ ಪಟ್ಟಣದ ಮಹಾಯಾಜಕನು ಸಾಯುವವರೆಗೂ ವಾಸಮಾಡಬೇಕಾಗಿತ್ತು. ಮಹಾಯಾಜಕನ ಮರಣದ ತರುವಾಯ ಕೊಲೆಪಾತಕನು ತನ್ನ ಸೊತ್ತಿರುವ ದೇಶಕ್ಕೆ ಹೋಗಬಹುದು.</verse>
				<verse number="29">“ ‘ಹೀಗೆ ಇವು ನಿಮ್ಮ ಸಮಸ್ತ ನಿವಾಸಿಗಳಲ್ಲಿ ನಿಮ್ಮ ಸಂತತಿಗಳಿಗೆಲ್ಲಾ ನ್ಯಾಯದ ಕಟ್ಟಳೆಯಾಗಿರಬೇಕು.</verse>
				<verse number="30">“ ‘ಪ್ರಾಣಹತ್ಯೆ ಮಾಡಿದ ಕೊಲೆಪಾತಕನನ್ನು ಸಾಕ್ಷಿಗಳನ್ನು ವಿಚಾರಿಸಿಕೊಂಡೇ ಅವನಿಗೆ ಮರಣಶಿಕ್ಷೆಯನ್ನು ವಿಧಿಸಬೇಕು. ಒಬ್ಬನೇ ಸಾಕ್ಷಿಯು ಒಂದು ಪ್ರಾಣಕ್ಕೆ ವಿರೋಧವಾಗಿ ಸಾಯುವ ಹಾಗೆ ಸಾಕ್ಷಿ ಕೊಡಬಾರದು.</verse>
				<verse number="31">“ ‘ಸಾಯತಕ್ಕ ಕೊಲೆಪಾತಕನ ಪ್ರಾಣಕ್ಕೋಸ್ಕರ ಈಡನ್ನು ತೆಗೆದುಕೊಳ್ಳಬೇಡಿರಿ. ಏಕೆಂದರೆ ಅವನು ನಿಜವಾಗಿಯೂ ಸಾಯಬೇಕು.</verse>
				<verse number="32">“ ‘ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿಗೋಸ್ಕರ ಅವನು ತಿರುಗಿಬಂದು ಮಹಾಯಾಜಕನು ಸಾಯುವವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತೆಗೆದುಕೊಳ್ಳಬೇಡಿರಿ.</verse>
				<verse number="33">“ ‘ಹೀಗೆ ನೀವು ವಾಸಿಸುವ ದೇಶವನ್ನು ನೀವು ಅಪವಿತ್ರ ಮಾಡಬೇಡಿರಿ. ಏಕೆಂದರೆ ದೇಶವನ್ನು ಅಪವಿತ್ರ ಮಾಡುವಂಥಾದ್ದು ರಕ್ತವೇ. ಹತರಾದವರ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.</verse>
				<verse number="34">ಆದ್ದರಿಂದ ನೀವು ವಾಸಮಾಡುವ ದೇಶವನ್ನು ನೀವು ಅಶುದ್ಧ ಮಾಡಬೇಡಿರಿ. ಏಕೆಂದರೆ ನಾನು ಅದರೊಳಗೆ ವಾಸಿಸುತ್ತೇನೆ. ಯೆಹೋವ ದೇವರಾಗಿರುವ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ,’ ” ಎಂದರು.</verse>
			</chapter>
			<chapter number="36">
				<verse number="1">ಆಗ ಯೋಸೇಫನ ಪುತ್ರರ ಕುಟುಂಬದವರಾದ ಮನಸ್ಸೆಯ ಮಗನಾಗಿರುವ ಮಾಕೀರನ ಮಗನಾದ ಗಿಲ್ಯಾದನ ಮಕ್ಕಳ ಕುಟುಂಬಗಳ ಮುಖ್ಯಸ್ಥರು ಮೋಶೆ ಹಾಗೂ ಇಸ್ರಾಯೇಲರ ಕುಲನಾಯಕರ ಸಮೀಪಕ್ಕೆ ಬಂದು ಮಾತನಾಡಿ,</verse>
				<verse number="2">“ಚೀಟುಹಾಕಿ ನಾಡನ್ನು ಇಸ್ರಾಯೇಲರಿಗೆ ಸೊತ್ತಾಗಿ ಕೊಡುವುದಕ್ಕೆ ಯೆಹೋವ ದೇವರು ನಮ್ಮ ಒಡೆಯನಾದ ನಿನಗೆ ಆಜ್ಞಾಪಿಸಿದರು. ನಮ್ಮ ಸಹೋದರನಾದ ಚಲ್ಪಹಾದನ ಸೊತ್ತನ್ನು ಅವನ ಪುತ್ರಿಯರಿಗೆ ಕೊಡಬೇಕೆಂದು ದೇವರಿಂದ ಅಪ್ಪಣೆಯಾಗಿತ್ತು.</verse>
				<verse number="3">ಆದರೆ ಅವರು ಇಸ್ರಾಯೇಲರ ಬೇರೆ ಗೋತ್ರದವರಿಗೆ ಮದುವೆಯಾದರೆ, ಅವರ ಸೊತ್ತು ಅಂದರೆ, ನಮ್ಮ ಪಿತೃಗಳ ಸೊತ್ತಿನಿಂದ ಅವರನ್ನು ಮದುವೆಮಾಡಿಕೊಂಡ ಗೋತ್ರದವರಿಗೆ ಸೊತ್ತು ಹೋಗುತ್ತದೆ. ಇದರಿಂದ ನಮ್ಮ ಸೊತ್ತಿನ ಭಾಗ ಕಡಿಮೆಯಾಗಿ ಹೋಗುವುದು.</verse>
				<verse number="4">ಇಸ್ರಾಯೇಲರಿಗೆ ಜೂಬಿಲಿ ವರ್ಷ ಬಂದಾಗ ಅವರ ಸೊತ್ತು ಅವರು ಸೇರಿಕೊಳ್ಳುವ ಗೋತ್ರಕ್ಕೆ ಸೇರಿಕೊಳ್ಳುತ್ತದೆ. ಹೀಗೆ ಅವರ ಸೊತ್ತು ಅಂದರೆ, ನಮ್ಮ ಪಿತೃಗಳ ಗೋತ್ರದ ಸೊತ್ತಿನಿಂದ ತೆಗೆಯಲಾಗುವುದು.”</verse>
				<verse number="5">ಆಗ ಮೋಶೆಯು ಯೆಹೋವ ದೇವರ ಆಜ್ಞೆಯಂತೆ ಇಸ್ರಾಯೇಲರಿಗೆ ಆಜ್ಞಾಪಿಸಿ, “ಯೋಸೇಫನ ಪುತ್ರರ ಗೋತ್ರದವರು ಸರಿಯಾಗಿ ಮಾತನಾಡುತ್ತಾರೆ.</verse>
				<verse number="6">ಯೆಹೋವ ದೇವರು ಚಲ್ಪಹಾದನ ಪುತ್ರಿಯರ ವಿಷಯದಲ್ಲಿ ಆಜ್ಞಾಪಿಸಿದ ಮಾತು ಏನೆಂದರೆ: ಅವರು ತಮ್ಮ ಮನಸ್ಸು ಬಂದವರೊಂದಿಗೆ ಮದುವೆಮಾಡಿಕೊಳ್ಳಲಿ, ಆದರೆ ತಮ್ಮ ತಂದೆಯ ಕುಟುಂಬದ ಗೋತ್ರದವರಿಗೆ ಮಾತ್ರ ಮದುವೆ ಮಾಡಿಕೊಳ್ಳಬಹುದು.</verse>
				<verse number="7">ಇಸ್ರಾಯೇಲರ ಸೊತ್ತು ಒಂದು ಗೋತ್ರದಿಂದ ಮತ್ತೊಂದು ಗೋತ್ರದ ಕೈಗೆ ಹೋಗಬಾರದು. ಏಕೆಂದರೆ ಇಸ್ರಾಯೇಲರು, ಒಬ್ಬೊಬ್ಬನು ತನ್ನ ಪಿತೃಗಳ ಗೋತ್ರದ ಸೊತ್ತನ್ನು ತಾನೇ ಹೊಂದಿರಬೇಕು.</verse>
				<verse number="8">ಇದಕ್ಕಾಗಿ ಇಸ್ರಾಯೇಲರಲ್ಲಿ ಒಬ್ಬೊಬ್ಬನು ತನ್ನ ಪಿತೃಗಳ ಸೊತ್ತನ್ನು ಸ್ವಾಧೀನ ಮಾಡಿಕೊಳ್ಳುವಂತೆ ಇಸ್ರಾಯೇಲರ ಗೋತ್ರಗಳೊಳಗೆ ಸೊತ್ತನ್ನು ಹೊಂದಿರುವ ಒಬ್ಬೊಬ್ಬ ಪುತ್ರಿಯು ತನ್ನ ಪಿತೃವಿನ ಕುಟುಂಬದ ಗೋತ್ರದಲ್ಲಿರುವವನೊಂದಿಗೇ ಮದುವೆ ಮಾಡಿಕೊಳ್ಳಬೇಕು.</verse>
				<verse number="9">ಒಂದು ಸೊತ್ತು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ಹಸ್ತಾಂತರಗೊಳ್ಳಬಾರದು ಆದರೆ ಇಸ್ರಾಯೇಲರ ಗೋತ್ರಗಳಲ್ಲಿ ಒಬ್ಬೊಬ್ಬನು ತನ್ನ ಸೊತ್ತಿಗೆ ತಾನೇ ಹೊಂದಿಕೊಳ್ಳಬೇಕು,” ಎಂದನು.</verse>
				<verse number="10">ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಚಲ್ಪಹಾದನ ಪುತ್ರಿಯರು ಮಾಡಿದರು.</verse>
				<verse number="11">ಚಲ್ಪಹಾದನ ಪುತ್ರಿಯರಾದ ಮಹ್ಲಾ, ತಿರ್ಚಾ, ಹೊಗ್ಲಾ, ಮಿಲ್ಕಾ, ನೋವಾ, ತಮ್ಮ ಚಿಕ್ಕಪ್ಪಂದಿರ ಪುತ್ರರನ್ನು ಮದುವೆಯಾದರು.</verse>
				<verse number="12">ಯೋಸೇಫನ ಮಗನಾದ ಮನಸ್ಸೆಯ ಪುತ್ರರ ಕುಟುಂಬದವರೊಡನೆ ಮದುವೆಯಾದರು. ಈ ಪ್ರಕಾರ ಅವರ ಸೊತ್ತು ತಮ್ಮ ಪಿತೃವಿನ ಗೋತ್ರದಲ್ಲಿಯೇ ಉಳಿಯಿತು.</verse>
				<verse number="13">ಯೆಹೋವ ದೇವರು ಯೆರಿಕೋವಿಗೆದುರಾಗಿ ಯೊರ್ದನಿನ ತೀರದಲ್ಲಿರುವ ಮೋವಾಬಿನ ಬಯಲುಗಳಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲರಿಗೆ ಆಜ್ಞಾಪಿಸಿದ ಆಜ್ಞೆಗಳೂ, ನ್ಯಾಯಗಳೂ ಇವೇ.</verse>
			</chapter>
		</book>
		<book number="5">
			<chapter number="1">
				<verse number="1">ಯೊರ್ದನ್ ನದಿಯ ಆಚೆ ಪಾರಾನ್, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬ ಊರುಗಳ ನಡುವೆ, ಮರುಭೂಮಿಯಲ್ಲಿ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ, ಮೋಶೆ ಇಸ್ರಾಯೇಲರಿಗೆ ಹೇಳಿದ ಮಾತುಗಳು ಇವು.</verse>
				<verse number="2">ಹೋರೇಬಿನಿಂದ ಕಾದೇಶ್ ಬರ್ನೇಯಕ್ಕೆ ಸೇಯೀರ್ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ.</verse>
				<verse number="3">ನಲ್ವತ್ತನೆಯ ವರ್ಷದಲ್ಲಿ ಹನ್ನೊಂದನೇ ತಿಂಗಳಿನ ಮೊದಲನೇ ದಿನದಲ್ಲಿ, ಮೋಶೆಯು ಇಸ್ರಾಯೇಲರಿಗೆ, ಯೆಹೋವ ದೇವರು ಅವನಿಗೆ ಅವರ ವಿಷಯವಾಗಿ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಮಾತನಾಡಿದನು.</verse>
				<verse number="4">ಅವನು ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನನ್ನು ಸೋಲಿಸಿದ ಮೇಲೆಯೂ, ಅಷ್ಟಾರೋತ್‌ನಲ್ಲಿ, ವಾಸಮಾಡಿದ ಬಾಷಾನಿನ ಅರಸನಾದ ಓಗನನ್ನೂ ಎದ್ರೈಯಲ್ಲಿ ಸೋಲಿಸಿದ ಮೇಲೆಯೂ ಮೋಶೆ ಇಸ್ರಾಯೇಲರಿಗೆ ಈ ಮಾತುಗಳನ್ನು ತಿಳಿಸಿದನು.</verse>
				<verse number="5">ಯೊರ್ದನ್ ನದಿಯ ಆಚೆ ಮೋವಾಬ್ಯರ ದೇಶದಲ್ಲಿ ಮೋಶೆ ಈ ನಿಯಮವನ್ನು ವಿವರಿಸುವುದಕ್ಕೆ ಪ್ರಾರಂಭಿಸಿದನು:</verse>
				<verse number="6">ನಮ್ಮ ದೇವರಾದ ಯೆಹೋವ ದೇವರು ಹೋರೇಬಿನಲ್ಲಿ ನಮಗೆ, “ನೀವು ಈ ಬೆಟ್ಟದಲ್ಲಿ ವಾಸಮಾಡಿದ್ದು ಸಾಕು,</verse>
				<verse number="7">ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ, ಅದರ ಅರಾಬಾ ಸಮೀಪದ ಎಲ್ಲಾ ಪ್ರದೇಶದ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ನೆಗೆವನಲ್ಲಿಯೂ ಸಮುದ್ರ ತೀರದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ, ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ.</verse>
				<verse number="8">ಆ ದೇಶವನ್ನು ನಿಮಗೆ ಕೊಟ್ಟಿದ್ದೇನೆ. ನೀವು ಹೋಗಿ ಯೆಹೋವ ದೇವರಾದ ನಾನು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಅವರ ತರುವಾಯ ಹುಟ್ಟುವ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶವನ್ನು ಸ್ವತಂತ್ರಿಸಿಕೊಳ್ಳಿರಿ,” ಎಂದು ಹೇಳಿದರು.</verse>
				<verse number="9">ಆ ಕಾಲದಲ್ಲಿ ನಾನು ನಿಮಗೆ, “ನಾನೊಬ್ಬನೇ ನಿಮ್ಮ ಭಾರವನ್ನು ಹೊರಲಾರೆನು.</verse>
				<verse number="10">ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಹೆಚ್ಚಿಸಿದ್ದಾರೆ. ನೀವು ಈ ಹೊತ್ತು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿದ್ದೀರಿ.</verse>
				<verse number="11">ನೀವು ಈಗ ಇರುವುದಕ್ಕಿಂತ ಇನ್ನೂ ಸಾವಿರದಷ್ಟಾಗುವಂತೆ ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮ್ಮನ್ನು ಹೆಚ್ಚಿಸಲಿ, ಅವರು ವಾಗ್ದಾನ ಮಾಡಿದ ಪ್ರಕಾರ ನಿಮ್ಮನ್ನು ಆಶೀರ್ವದಿಸಲಿ.</verse>
				<verse number="12">ಆದರೆ ನಿಮ್ಮ ಸಮಸ್ಯೆಗಳನ್ನೂ ಹೊಣೆಯನ್ನೂ ವ್ಯಾಜ್ಯಗಳನ್ನೂ ನಾನೊಬ್ಬನೇ ಸಹಿಸುವುದು ಹೇಗೆ?</verse>
				<verse number="13">ಆದ್ದರಿಂದ ನೀವು ಪ್ರತಿಯೊಂದು ಗೋತ್ರದಿಂದ ಜ್ಞಾನಿಗಳೂ ವಿವೇಕಿಗಳೂ ಪ್ರಖ್ಯಾತರೂ ಆದ ವ್ಯಕ್ತಿಗಳನ್ನು ಆರಿಸಿಕೊಳ್ಳಿರಿ. ನಾನು ಅವರನ್ನು ನಿಮಗೆ ಅಧಿಪತಿಗಳಾಗಿ ನೇಮಿಸುತ್ತೇನೆ,” ಎಂದು ಹೇಳಿದೆನು.</verse>
				<verse number="14">ಅದಕ್ಕೆ ನೀವು ನನಗೆ ಉತ್ತರವಾಗಿ, “ನೀನು ಹೇಳಿದ ಮಾತು ಮಾಡುವುದಕ್ಕೆ ಒಳ್ಳೆಯದು,” ಎಂದಿರಿ.</verse>
				<verse number="15">ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಜ್ಞಾನಿಗಳನ್ನು ಕರೆಯಿಸಿ, ಒಂದೊಂದು ಗೋತ್ರದಲ್ಲಿ ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ, ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ನೇಮಿಸಿದೆನು.</verse>
				<verse number="16">ಆ ನ್ಯಾಯಾಧಿಪತಿಗಳಿಗೆ ಆ ಕಾಲದಲ್ಲಿ ನಾನು, “ನಿಮ್ಮ ಸಹೋದರರು ತಮ್ಮಲ್ಲಿ ಮಾಡುವ ವ್ಯಾಜ್ಯಗಳನ್ನು ವಿಚಾರಿಸಬೇಕು. ಅದು ಇಸ್ರಾಯೇಲರ ವ್ಯಾಜ್ಯವಾಗಿರಬಹುದು. ಇಸ್ರಾಯೇಲರಲ್ಲದವರ ವ್ಯಾಜ್ಯವಾಗಿರಬಹುದು. ಎಲ್ಲವನ್ನು ನೀವು ನ್ಯಾಯದ ಪ್ರಕಾರವೇ ತೀರ್ಮಾನಿಸಬೇಕು.</verse>
				<verse number="17">ನ್ಯಾಯದಲ್ಲಿ ನೀವು ಮುಖದಾಕ್ಷಿಣ್ಯ ಮಾಡಬೇಡಿರಿ. ಹಿರಿಯನನ್ನು ಹೇಗೋ ಹಾಗೆಯೇ ಕಿರಿಯನನ್ನು ಕೇಳಬೇಕು. ಯಾವ ಮನುಷ್ಯನಿಗೂ ಹೆದರಬೇಡಿರಿ. ಆದರೆ ನ್ಯಾಯ ತೀರ್ವಿಕೆಯು ದೇವರದೇ. ನಿಮಗೆ ಕಠಿಣವಾದ ವ್ಯಾಜ್ಯಗಳನ್ನು ನನ್ನ ಮುಂದೆ ತನ್ನಿರಿ, ನಾನು ಅದನ್ನು ತೀರಿಸುವೆನು,” ಎಂದು ಹೇಳಿದೆ.</verse>
				<verse number="18">ಹೀಗೆ ನೀವು ಮಾಡತಕ್ಕ ಕಾರ್ಯಗಳನ್ನೆಲ್ಲಾ ಆ ಕಾಲದಲ್ಲಿ ನಿಮಗೆ ಆಜ್ಞಾಪಿಸಿದೆನು.</verse>
				<verse number="19">ಆಗ ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವ ದೇವರು ನಮಗೆ ಆಜ್ಞಾಪಿಸಿದ ಪ್ರಕಾರ, ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಮರುಭೂಮಿಯನ್ನೆಲ್ಲಾ ದಾಟಿ, ಕಾದೇಶ್ ಬರ್ನೇಯಕ್ಕೆ ಬಂದೆವು.</verse>
				<verse number="20">ಆಗ ನಾನು ನಿಮಗೆ, “ನಮ್ಮ ದೇವರಾದ ಯೆಹೋವ ದೇವರು ನಮಗೆ ಕೊಡುವ ಅಮೋರಿಯರ ಮಲೆನಾಡಿಗೆ ಹತ್ತಿರ ಬಂದಿದ್ದೀರಿ.</verse>
				<verse number="21">ನಿಮ್ಮ ದೇವರಾದ ಯೆಹೋವ ದೇವರು ದೇಶವನ್ನು ನಿಮಗೆ ಕೊಟ್ಟಿದ್ದಾರೆ, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ಹೇಳಿದ ಪ್ರಕಾರ ಅದನ್ನು ಏರಿ ಸ್ವಾಧೀನಮಾಡಿಕೊಳ್ಳಿರಿ. ಭಯಪಡಬೇಡಿರಿ, ಧೈರ್ಯವಾಗಿರಿ,” ಎಂದೆನು.</verse>
				<verse number="22">ಆಗ ನೀವೆಲ್ಲರು ನನ್ನ ಬಳಿಗೆ ಬಂದು, “ನಮಗಿಂತ ಮುಂದಾಗಿ ಜನರನ್ನು ಕಳುಹಿಸೋಣ. ಅವರು ನಮಗೆ ದೇಶವನ್ನು ಸಂಚರಿಸಿ ನೋಡಿ, ನಾವು ಮೇಲೆ ಹೋಗತಕ್ಕ ಮಾರ್ಗದ ವಿಷಯದಲ್ಲಿಯೂ ನಾವು ಪ್ರವೇಶಿಸುವ ಪಟ್ಟಣಗಳ ವಿಷಯದಲ್ಲಿಯೂ ನಮಗೆ ಸಮಾಚಾರವನ್ನು ತರಲಿ,” ಎಂದು ಹೇಳಿದಿರಿ.</verse>
				<verse number="23">ಆ ಮಾತು ನನಗೆ ಒಳ್ಳೆಯದೆಂದು ತೋಚಿತು. ನಾನು ನಿಮ್ಮಲ್ಲಿ ಗೋತ್ರಕ್ಕೆ ಒಬ್ಬನ ಪ್ರಕಾರ ಹನ್ನೆರಡು ಮಂದಿಯನ್ನು ಆರಿಸಿಕೊಂಡೆನು.</verse>
				<verse number="24">ಅವರು ಹೋಗಿ ಬೆಟ್ಟವನ್ನೇರಿ, ಎಷ್ಕೋಲೆಂಬ ಹಳ್ಳದ ಬಳಿಗೆ ಬಂದು, ಅದನ್ನು ಸಂಚರಿಸಿ ನೋಡಿ,</verse>
				<verse number="25">ಆ ದೇಶದ ಫಲದಲ್ಲಿ ಕೆಲವನ್ನು ಕೈಯಲ್ಲಿ ತೆಗೆದುಕೊಂಡು, ನಮ್ಮ ಬಳಿಗೆ ತಂದು ತೋರಿಸಿ, “ನಮ್ಮ ದೇವರಾದ ಯೆಹೋವ ದೇವರು ನಮಗೆ ಕೊಡುವ ದೇಶವು ಒಳ್ಳೆಯದು,” ಎಂದು ವರದಿಮಾಡಿದರು.</verse>
				<verse number="26">ಆದರೆ ನೀವು ಮೇಲೆ ಹತ್ತಿ ಹೋಗುವುದಕ್ಕೆ ಮನಸ್ಸಿಲ್ಲದೆ ನಿಮ್ಮ ದೇವರಾದ ಯೆಹೋವ ದೇವರ ಅಪ್ಪಣೆಗೆ ತಿರುಗಿಬಿದ್ದಿರಿ.</verse>
				<verse number="27">ನೀವು ನಿಮ್ಮ ಗುಡಾರಗಳಲ್ಲಿ ಗೊಣಗುಟ್ಟಿ, “ಯೆಹೋವ ದೇವರು ನಮ್ಮನ್ನು ಹಗೆ ಮಾಡಿದ್ದರಿಂದ, ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ, ನಮ್ಮನ್ನು ನಾಶಮಾಡುವುದಕ್ಕೆ ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ್ದಾರೆ.</verse>
				<verse number="28">ನಾವು ಎಲ್ಲಿಗೆ ಏರಿಹೋಗೋಣ? ನಮ್ಮ ಸಹೋದರರು, ‘ಆ ಜನರು ನಮಗಿಂತ ಬಲಿಷ್ಠರೂ ಎತ್ತರವಾದವರೂ ಪಟ್ಟಣಗಳು ದೊಡ್ಡವೂ, ಆಕಾಶವನ್ನು ಮುಟ್ಟುವ ಗೋಡೆಯುಳ್ಳವುಗಳೂ ಆಗಿವೆ. ಇದಲ್ಲದೆ ರಾಕ್ಷಸಾಕಾರದ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು’ ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ,” ಎಂದು ಹೇಳಿದಿರಿ.</verse>
				<verse number="29">ಆಗ ನಾನು ನಿಮಗೆ, “ಅಂಜಬೇಡಿರಿ, ಅವರಿಗೆ ಭಯಪಡಬೇಡಿರಿ.</verse>
				<verse number="30">ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿಯೂ ಮರುಭೂಮಿಯಲ್ಲಿಯೂ ನಿಮ್ಮ ಕಣ್ಣು ಮುಂದೆ, ಯುದ್ಧಮಾಡಿದಂತೆಯೇ ಈಗಲೂ ನಿಮಗೋಸ್ಕರ ಯುದ್ಧಮಾಡುವರು.</verse>
				<verse number="31">ನೀವು ಈ ಸ್ಥಳಕ್ಕೆ ಸೇರುವ ತನಕ ನಿಮ್ಮ ಪ್ರಯಾಣದಲ್ಲೆಲ್ಲಾ ಒಬ್ಬ ತಂದೆ ತನ್ನ ಮಗನನ್ನು ಹೇಗೆ ಹೊರುತ್ತಾನೋ ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಹೊತ್ತು ತಂದರಲ್ಲವೇ?” ಎಂದು ನಿಮಗೆ ಹೇಳಿದೆನು.</verse>
				<verse number="32">ಆದರೆ ಈ ಕಾರ್ಯದಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಲಿಲ್ಲ.</verse>
				<verse number="33">ಅವರೇ ನಿಮಗೆ ಇಳಿದುಕೊಳ್ಳುವುದಕ್ಕೆ ಸ್ಥಳವನ್ನು ಗೊತ್ತುಮಾಡಿ ನೀವು ಹೋಗತಕ್ಕ ಮಾರ್ಗವನ್ನು ನಿಮಗೆ ತೋರಿಸಲು ರಾತ್ರಿ ಹೊತ್ತು ಬೆಂಕಿಯಲ್ಲಿಯೂ ಹಗಲು ಹೊತ್ತು ಮೇಘದಲ್ಲಿಯೂ ನಿಮ್ಮ ಮುಂದೆ ಹೋದರು.</verse>
				<verse number="34">ಯೆಹೋವ ದೇವರು ನಿಮ್ಮ ಮಾತುಗಳನ್ನು ಕೇಳಿ, ಬೇಸರಗೊಂಡು, ಪ್ರಮಾಣಮಾಡಿ,</verse>
				<verse number="35">“ಕೆಟ್ಟ ಸಂತತಿಯಾದ ಈ ಮನುಷ್ಯರಲ್ಲಿ ಒಬ್ಬನಾದರೂ ನಾನು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಒಳ್ಳೆಯ ದೇಶವನ್ನು ನೋಡುವುದಿಲ್ಲ.</verse>
				<verse number="36">ಯೆಫುನ್ನೆಯ ಮಗ ಕಾಲೇಬನು ಮಾತ್ರ ಅದನ್ನು ನೋಡುವನು. ಅವನು ಯೆಹೋವ ದೇವರನ್ನು ಪೂರ್ಣವಾಗಿ ಹಿಂಬಾಲಿಸಿದ್ದರಿಂದ, ಅವನು ಸಂದರ್ಶಿಸಿದ ದೇಶವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು,” ಎಂದರು.</verse>
				<verse number="37">ನನ್ನ ಮೇಲೆಯೂ ಯೆಹೋವ ದೇವರು ನಿಮ್ಮ ವಿಷಯವಾಗಿ ಬೇಸರಮಾಡಿಕೊಂಡು, “ನೀನು ಸಹ ಅದರಲ್ಲಿ ಪ್ರವೇಶಿಸುವುದಿಲ್ಲ.</verse>
				<verse number="38">ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನನ್ನು ಧೈರ್ಯಗೊಳಿಸು. ಅವನೇ ಆ ನಾಡನ್ನು ಇಸ್ರಾಯೇಲಿಗೆ ಸ್ವಾಧೀನಪಡಿಸುವನು.</verse>
				<verse number="39">ಇದಲ್ಲದೆ ಸೆರೆಯಾಗಿ ಹೋಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈ ಹೊತ್ತು ಒಳ್ಳೆಯದು, ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳು ಅದರಲ್ಲಿ ಪ್ರವೇಶಿಸುವರು. ನಾನು ಅವರಿಗೆ ಅದನ್ನು ಕೊಡುವೆನು, ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು.</verse>
				<verse number="40">ನೀವಾದರೋ ತಿರುಗಿಕೊಂಡು ಕೆಂಪು ಸಮುದ್ರ ಮಾರ್ಗವಾಗಿ ಮರುಭೂಮಿಗೆ ಹೊರಟು ಹೋಗಿರಿ,” ಎಂದು ಹೇಳಿದರು.</verse>
				<verse number="41">ಆಗ ನೀವು ಉತ್ತರಕೊಟ್ಟು ನನಗೆ, “ಯೆಹೋವ ದೇವರಿಗೆ ಪಾಪಮಾಡಿದ್ದೇವೆ. ನಮ್ಮ ದೇವರಾದ ಯೆಹೋವ ದೇವರು ನಮಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ನಾವು ಬೆಟ್ಟವನ್ನು ಹತ್ತಿ ಯುದ್ಧ ಮಾಡುತ್ತೇವೆ. ನೀವೆಲ್ಲರು ನಿಮ್ಮ ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಮೇಲೆ ಬೆಟ್ಟಕ್ಕೆ ಹೊರಟುಹೋಗುವುದು ಸಣ್ಣ ಕೆಲಸ,” ಎಂದು ಹೇಳಿದಿರಿ.</verse>
				<verse number="42">ಆದರೆ ಯೆಹೋವ ದೇವರು ನನಗೆ, “ ‘ಏರಿ ಹೋಗಬೇಡಿರಿ, ಯುದ್ಧಮಾಡಬೇಡಿರಿ. ಏಕೆಂದರೆ ನಾನು ನಿಮ್ಮ ಮಧ್ಯದಲ್ಲಿ ಇಲ್ಲ. ನೀವು ನಿಮ್ಮ ಶತ್ರುಗಳಿಂದ ಸೋಲನ್ನು ಅನುಭವಿಸುವಿರಿ,’ ಎಂದು ಅವರಿಗೆ ಹೇಳು,” ಎಂದರು.</verse>
				<verse number="43">ಇದನ್ನು ನಾನು ನಿಮಗೆ ಹೇಳಲಾಗಿ ನೀವು ಕೇಳದೆ, ಯೆಹೋವ ದೇವರ ಅಪ್ಪಣೆಗೆ ತಿರುಗಿಬಿದ್ದು, ಗರ್ವದಿಂದ ಧೈರ್ಯಮಾಡಿ ಬೆಟ್ಟವನ್ನೇರಿದಿರಿ.</verse>
				<verse number="44">ಆಗ ಆ ಬೆಟ್ಟದಲ್ಲಿ ವಾಸಮಾಡುತ್ತಿದ್ದ ಅಮೋರಿಯರು ನಿಮಗೆ ವಿರುದ್ಧವಾಗಿ ಹೊರಟು, ಜೇನುಹುಳಗಳು ಮುತ್ತಿದಂತೆ ನಿಮ್ಮ ಬೆನ್ನು ಹತ್ತಿ, ಸೇಯೀರಿನಲ್ಲಿ ಹೊರ್ಮಾದವರೆಗೂ ನಿಮ್ಮನ್ನು ಸಂಹಾರ ಮಾಡಿದರು.</verse>
				<verse number="45">ನೀವು ತಿರುಗಿಕೊಂಡು ಯೆಹೋವ ದೇವರ ಮುಂದೆ ಅತ್ತಿರಿ. ಆದರೆ ಯೆಹೋವ ದೇವರು ನಿಮ್ಮ ಧ್ವನಿಗೆ ಕಿವಿಗೊಡಲಿಲ್ಲ.</verse>
				<verse number="46">ಆಮೇಲೆ ನೀವು ಕಾದೇಶಿನಲ್ಲಿ ಬಹಳ ದಿವಸ ವಾಸವಾಗಿದ್ದಿರಿ.</verse>
			</chapter>
			<chapter number="2">
				<verse number="1">ಆಗ ಯೆಹೋವ ದೇವರು ನನಗೆ ಆಜ್ಞಾಪಿಸಿದ ಪ್ರಕಾರ ಮರುಭೂಮಿಗೆ ಹೊರಟು ಕೆಂಪುಸಮುದ್ರದ ಮಾರ್ಗದಲ್ಲಿ ಅನೇಕ ದಿನಗಳು ಸೇಯೀರ್ ಬೆಟ್ಟದ ಮಲೆನಾಡನ್ನು ಸುತ್ತುತ್ತಿದ್ದೆವು.</verse>
				<verse number="2">ಆಮೇಲೆ ಯೆಹೋವ ದೇವರು ನನಗೆ,</verse>
				<verse number="3">“ನೀವು ಈ ಬೆಟ್ಟವನ್ನು ಸುತ್ತಿದ್ದು ಸಾಕು. ಉತ್ತರಕ್ಕೆ ತಿರುಗಿಕೊಳ್ಳಿರಿ.</verse>
				<verse number="4">ನೀವು ಜನರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ನೀವು ಸೇಯೀರಿನಲ್ಲಿ ವಾಸಮಾಡುವ ನಿಮ್ಮ ಸಹೋದರರಾದ ಏಸಾವನ ಪುತ್ರರ ಗಡಿಯನ್ನು ದಾಟಬೇಕು. ಅವರು ನಿಮಗೆ ಭಯಪಡುವರು. ಆದ್ದರಿಂದ ನೀವು ಬಹಳ ಜಾಗ್ರತೆಯಿಂದಿರಬೇಕು.</verse>
				<verse number="5">ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ನಿಮಗೆ ಅವರ ದೇಶದಲ್ಲಿ ಪಾದವಿಡುವಷ್ಟು ಸ್ಥಳವನ್ನಾದರೂ ಕೊಡುವುದಿಲ್ಲ. ಏಕೆಂದರೆ ಸೇಯೀರ್ ಬೆಟ್ಟವನ್ನು ನಾನು ಏಸಾವನಿಗೆ ಸ್ವದೇಶವಾಗಿ ಕೊಟ್ಟಿದ್ದೇನೆ.</verse>
				<verse number="6">ನೀವು ಅಲ್ಲಿ ಉಣ್ಣುವ ಆಹಾರವನ್ನು ಮತ್ತು ಕುಡಿಯುವ ನೀರನ್ನು ಸಹ ಹಣಕೊಟ್ಟು ಕೊಂಡುಕೊಳ್ಳಬೇಕು.’ ”</verse>
				<verse number="7">ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮನ್ನು ಆಶೀರ್ವದಿಸಿದ್ದಾರೆ. ನೀವು ಈ ದೊಡ್ಡ ಮರುಭೂಮಿಯಲ್ಲಿ ಸಂಚಾರ ಮಾಡಿದ್ದನ್ನು ದೇವರು ಗಮನಿಸಿದ್ದಾರೆ. ಈ ನಲವತ್ತು ವರ್ಷ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದರು. ನಿಮಗೆ ಏನೂ ಕಡಿಮೆ ಆಗಲಿಲ್ಲ.</verse>
				<verse number="8">ಈ ಪ್ರಕಾರ ನಾವು ಸೇಯೀರಿನಲ್ಲಿ ವಾಸಮಾಡುವ ನಮ್ಮ ಸಹೋದರರಾದ ಏಸಾವನ ಮಕ್ಕಳ ಕಡೆಯಿಂದ ಓರೆಯಾಗಿ ತಿರುಗಿಕೊಂಡು ಅರಾಬಾದ ಮಾರ್ಗವನ್ನು ಬಿಟ್ಟು ಏಲತ್, ಎಚ್ಯೋನ್ ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ, ಮೋವಾಬಿನ ಮರುಭೂಮಿಯ ಮಾರ್ಗವಾಗಿ ಹಾದು ಹೋದೆವು.</verse>
				<verse number="9">ಆಗ ಯೆಹೋವ ದೇವರು ನನಗೆ, “ಮೋವಾಬ್ಯರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ಏಕೆಂದರೆ ನಾನು ಅವರ ದೇಶದಲ್ಲಿ ನಿನಗೆ ಸೊತ್ತನ್ನು ಕೊಡುವುದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಆರ್ ಎಂಬ ಪ್ರದೇಶವನ್ನು ಕೊಟ್ಟೆನಲ್ಲವೇ?” ಎಂದರು.</verse>
				<verse number="10">ಅದರೊಳಗೆ ಪೂರ್ವದಲ್ಲಿ ಏಮಿಯರು ವಾಸವಾಗಿದ್ದರು. ಅವರು ಅನಾಕ್ಯರ ಹಾಗೆ ಬಲಿಷ್ಠರೂ ಬಹುಜನರೂ ಎತ್ತರವಾದವರೂ ಆಗಿದ್ದರು.</verse>
				<verse number="11">ಅವರು ಅನಾಕ್ಯರ ಹಾಗೆ ರೆಫಾಯರಿಗೆ ಸೇರಿದವರೆಂದು ಹೇಳುವದುಂಟು. ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು.</verse>
				<verse number="12">ಅದೇ ಪೂರ್ವಕಾಲದಲ್ಲಿ ಹೋರಿಯರು ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಾಯೇಲರು ತಮಗೆ ಯೆಹೋವ ದೇವರು ಕೊಟ್ಟ ನಾಡನ್ನು ಹೇಗೆ ಸ್ವಾಧೀನ ಮಾಡಿಕೊಂಡರೋ, ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ, ಅವರ ನಾಡಿನಲ್ಲಿ ವಾಸಮಾಡಿದರು.</verse>
				<verse number="13">“ಈಗ ಎದ್ದು ಜೆರೆದ್ ಹಳ್ಳವನ್ನು ದಾಟಿರಿ,” ಎಂದು ಯೆಹೋವ ದೇವರು ಹೇಳಿದ ಮೇಲೆ ನಾವು ಜೆರೆದ್ ಹಳ್ಳವನ್ನು ದಾಟಿದೆವು.</verse>
				<verse number="14">ನಾವು ಕಾದೇಶ್ ಬರ್ನೇಯವನ್ನು ಬಿಟ್ಟಂದಿನಿಂದ ಜೆರೆದ್ ಹಳ್ಳವನ್ನು ದಾಟಿದವರೆಗೆ ಗತಿಸಿದ ಕಾಲವು ಮೂವತ್ತೆಂಟು ವರ್ಷ. ಯೆಹೋವ ದೇವರು ಅವರಿಗೆ ಪ್ರಮಾಣ ಮಾಡಿದ ಪ್ರಕಾರ ಅಷ್ಟರಲ್ಲಿ ಆ ಸಂತತಿಯ ಸೈನಿಕರೆಲ್ಲರು ಸತ್ತುಹೋಗಿದ್ದರು.</verse>
				<verse number="15">ಪಾಳೆಯದಿಂದ ಅವರನ್ನು ಸಂಪೂರ್ಣವಾಗಿ ಹೊರಹಾಕುವವರೆಗೂ ಯೆಹೋವ ದೇವರ ಹಸ್ತವು ಅವರ ಮೇಲಿತ್ತು.</verse>
				<verse number="16">ಉಳಿದ ಯುದ್ಧ ಮಾಡುವವರು ಜನರೊಳಗಿಂದ ಸತ್ತು ಹೋದ ಮೇಲೆ,</verse>
				<verse number="17">ಯೆಹೋವ ದೇವರು ನನ್ನೊಂದಿಗೆ ಮಾತನಾಡಿ ನನಗೆ,</verse>
				<verse number="18">“ಇಂದು ನೀನು ಮೋವಾಬಿನ ಮೇರೆಯಾದ ಆರ್ ಎಂಬ ಸ್ಥಳವನ್ನು ದಾಟಬೇಕು.</verse>
				<verse number="19">ಅಮ್ಮೋನ್ಯರ ಹತ್ತಿರಕ್ಕೆ ನೀವು ಬಂದಾಗ, ಅವರಿಗೆ ಕಿರುಕುಳ ನೀಡಬೇಡಿರಿ ಅಥವಾ ಅವರನ್ನು ಯುದ್ಧಕ್ಕೆ ಪ್ರಚೋದಿಸಬೇಡಿರಿ. ನಾನು ಆ ದೇಶವನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸೊತ್ತಾಗಿ ಕೊಟ್ಟಿರುವದರಿಂದ ನಿಮಗೆ ಅದರಲ್ಲಿ ಯಾವ ಭಾಗವನ್ನೂ ಕೊಡುವುದಿಲ್ಲ” ಎಂದರು.</verse>
				<verse number="20">ಪೂರ್ವಕಾಲದಲ್ಲಿ ರೆಫಾಯರು ಆ ದೇಶದಲ್ಲಿ ವಾಸವಾಗಿದ್ದುದರಿಂದ ಅದು ಸಹ ರೆಫಾಯರ ದೇಶವೆನಿಸಿಕೊಳ್ಳುತ್ತದೆ. ಅಮ್ಮೋನಿಯರು ಅವರಿಗೆ ಜಂಜುಮ್ಯರೆಂದು ಕರೆದರು.</verse>
				<verse number="21">ಅವರು ಅನಾಕ್ಯರ ಹಾಗೆ ಬಲಿಷ್ಠರೂ ಬಹುಜನರೂ ಎತ್ತರವಾದವರೂ ಆಗಿದ್ದರು. ಆದರೆ ಯೆಹೋವ ದೇವರು ಅವರನ್ನು ಅಮ್ಮೋನಿಯರ ಮುಂದೆ ತೆಗೆದುಹಾಕಿದ್ದರು. ಹೀಗೆ ಅಮ್ಮೋನಿಯರು ಅವರನ್ನು ಹೊರಡಿಸಿ, ಅವರ ಬದಲಾಗಿ ವಾಸಿಸಿದರು.</verse>
				<verse number="22">ಯೆಹೋವ ದೇವರು ಸೇಯೀರಿನಲ್ಲಿ ವಾಸವಾಗಿರುವ ಏಸಾವನ ಮಕ್ಕಳಿಗೆ ಮಾಡಿದ ಹಾಗೆ ಆಯಿತು. ದೇವರು ಅವರ ಮುಂದೆ ಹೋರಿಯರನ್ನು ತೆಗೆದುಹಾಕಿದರು. ಹೀಗೆ ಅವರು ಹೋರಿಯರನ್ನು ಹೊರಡಿಸಿ, ಇವರ ಬದಲಾಗಿ ಇಂದಿನವರೆಗೂ ವಾಸಿಸುತ್ತಿದ್ದಾರೆ.</verse>
				<verse number="23">ಹಾಗೆ ಗಾಜಾ ಪಟ್ಟಣದವರೆಗೂ ವಾಸವಾಗಿದ್ದ ಅವ್ವೀಯರನ್ನು ಕಫ್ತೋರಿಂದ ಬಂದ ಕಫ್ತೋರ್ಯರು ನಾಶಮಾಡಿ, ಅವರ ಬದಲಾಗಿ ವಾಸಿಸಿದರು.</verse>
				<verse number="24">“ಈಗ ಏಳಿರಿ, ಹೊರಡಿರಿ, ಅರ್ನೋನ್ ಹಳ್ಳವನ್ನು ದಾಟಿರಿ, ಇಗೋ, ಹೆಷ್ಬೋನಿನ ಅರಸ ಅಮೋರಿಯನಾದ ಸೀಹೋನನನ್ನೂ, ಅವನ ದೇಶವನ್ನೂ ನಿಮ್ಮ ಕೈಯಲ್ಲಿ ಕೊಟ್ಟಿದ್ದೇನೆ. ಅವನ ಸಂಗಡ ಯುದ್ಧಮಾಡಿ, ಆ ದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಆರಂಭಮಾಡಿರಿ.</verse>
				<verse number="25">ಇದೇ ದಿವಸ ಆಕಾಶದ ಕೆಳಗಿರುವ ಜನಾಂಗಗಳ ಮೇಲೆ ನಿಮ್ಮ ಹೆದರಿಕೆಯೂ ಮತ್ತು ಭಯವೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿ ನಡುಗಿ ಅಂಜುವರು,” ಎಂದರು.</verse>
				<verse number="26">ಆಗ ನಾನು ಕೆದೇಮೋತೆಂಬ ಮರುಭೂಮಿಯಿಂದ ಹೆಷ್ಬೋನಿನ ಅರಸನಾದ ಸೀಹೋನನಿಗೆ ಸಮಾಧಾನದ ಸುದ್ದಿಯನ್ನು ತಿಳಿಸುವಂತೆ ದೂತರನ್ನು ಕಳುಹಿಸಿ,</verse>
				<verse number="27">“ನಾವು ನಿನ್ನ ನಾಡನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಕ್ಕೂ ಬಲಕ್ಕೂ ತಿರುಗದೆ ರಾಜ ಮಾರ್ಗದಿಂದಲೇ ಹೋಗುವೆವು.</verse>
				<verse number="28">ನಾವು ಊಣ್ಣುವುದಕ್ಕೆ ಆಹಾರವನ್ನೂ ಕುಡಿಯಲು ನೀರನ್ನು ಹಣಕೊಟ್ಟು ನಿಮ್ಮಿಂದ ಕೊಂಡುಕೊಳ್ಳುತ್ತೇವೆ. ಕಾಲ್ನಡಿಗೆಯಿಂದ ನಿಮ್ಮ ನಾಡನ್ನು ಹಾದು ಹೋಗುತ್ತೇವಷ್ಟೆ.</verse>
				<verse number="29">ನಾವು ಯೊರ್ದನಿನ ಆಚೆಗೆ ನಮ್ಮ ದೇವರಾದ ಯೆಹೋವ ದೇವರು ನಮಗೆ ಕೊಡುವ ದೇಶಕ್ಕೆ ಹೋಗುವವರಿದ್ದೇವೆ. ಸೇಯೀರಿನಲ್ಲಿ ವಾಸಮಾಡುವ ಏಸಾವನ ಮಕ್ಕಳೂ ಆರ್ ಪ್ರದೇಶದಲ್ಲಿ ವಾಸಮಾಡುವ ಮೋವಾಬ್ಯರೂ ನಮಗೆ ದಾರಿಕೊಟ್ಟಂತೆ ನೀವೂ ನಮಗೆ ಕೊಡಬೇಕು,” ಎಂದೆನು.</verse>
				<verse number="30">ಆದರೆ ಹೆಷ್ಬೋನಿನ ಅರಸನಾದ ಸೀಹೋನನು ನಮ್ಮನ್ನು ತನ್ನ ಬಳಿಯಿಂದ ದಾಟಿಹೋಗಲು ಸಮ್ಮತಿಸಲಿಲ್ಲ. ಏಕೆಂದರೆ ಅವನನ್ನು ನಿಮ್ಮ ಕೈಯಲ್ಲಿ ಒಪ್ಪಿಸುವ ಹಾಗೆ ನಿಮ್ಮ ದೇವರಾದ ಯೆಹೋವ ದೇವರು ಅವನ ಬುದ್ಧಿಯನ್ನು ಮಂಕುಮಾಡಿ, ಹೃದಯವನ್ನು ಕಠಿಣಪಡಿಸಿದರು. ಈಗಾಗಲೇ ಅದು ನೆರವೇರಿದೆ.</verse>
				<verse number="31">ಇದಲ್ಲದೆ ಯೆಹೋವ ದೇವರು ನನಗೆ, “ಸೀಹೋನನನ್ನೂ ಅವನ ದೇಶವನ್ನೂ ನಿನ್ನ ಮುಂದೆ ಒಪ್ಪಿಸುವುದಕ್ಕೆ ಆರಂಭಮಾಡಿದ್ದೇನೆ, ಅವನ ದೇಶವನ್ನು ಸೊತ್ತಾಗಿ ಹೊಂದುವಂತೆ ವಶಪಡಿಸಿಕೊಳ್ಳುವುದಕ್ಕೆ ಆರಂಭಮಾಡು,” ಎಂದು ಹೇಳಿದರು.</verse>
				<verse number="32">ಆಗ ಸೀಹೋನನು ತನ್ನ ಜನರೆಲ್ಲರ ಸಂಗಡ ನಮ್ಮೊಡನೆ ಯುದ್ಧಮಾಡುವುದಕ್ಕೆ ಯಹಚಗೆ ಹೊರಟುಬಂದನು.</verse>
				<verse number="33">ನಮ್ಮ ದೇವರಾದ ಯೆಹೋವ ದೇವರು ಅವನನ್ನು ನಮ್ಮ ಕೈಗೆ ಕೊಟ್ಟುಬಿಟ್ಟಿದ್ದರಿಂದ, ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಸೋಲಿಸಿದೆವು.</verse>
				<verse number="34">ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತೆಗೆದುಕೊಂಡು, ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು. ಒಬ್ಬರನ್ನೂ ಉಳಿಸಲಿಲ್ಲ.</verse>
				<verse number="35">ಪಶುಗಳನ್ನು ಮಾತ್ರ ನಮಗೆ ತೆಗೆದುಕೊಂಡು, ಪಟ್ಟಣಗಳನ್ನು ಸೂರೆಮಾಡಿದೆವು.</verse>
				<verse number="36">ಅರ್ನೋನಿನ ತೀರದಲ್ಲಿರುವ ಅರೋಯೇರ್ ಹಳ್ಳದ ಪಟ್ಟಣವು ಮೊದಲ್ಗೊಂಡು ಗಿಲ್ಯಾದಿನವರೆಗೂ ಒಂದು ಪಟ್ಟಣವಾದರೂ ನಮಗೆ ಅಸಾಧ್ಯವಾಗಿರಲಿಲ್ಲ. ನಮ್ಮ ದೇವರಾದ ಯೆಹೋವ ದೇವರು ಅವುಗಳನ್ನೆಲ್ಲಾ ನಮ್ಮ ಕೈಗೆ ಒಪ್ಪಿಸಿದರು.</verse>
				<verse number="37">ಅಮ್ಮೋನಿಯರ ದೇಶದ ಯಬ್ಬೋಕ್ ನದಿಯ ಬಳಿಯಲ್ಲಿರುವ ಸ್ಥಳವನ್ನೂ ಪರ್ವತ ಪಟ್ಟಣವನ್ನೂ ನಮ್ಮ ದೇವರಾದ ಯೆಹೋವ ದೇವರು ನಮಗೆ ಬೇಡವೆಂದ ಕಾರಣ, ಆ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ.</verse>
			</chapter>
			<chapter number="3">
				<verse number="1">ಆಗ ನಾವು ಹಿಂದಿರುಗಿ ಬಾಷಾನಿನ ಕಡೆಗೆ ಮೇಲಕ್ಕೆ ಹೊರಟೆವು. ಆಗ ಬಾಷಾನಿನ ಅರಸನಾದ ಓಗನು ತನ್ನ ಸಮಸ್ತ ಜನರ ಸಂಗಡ ನಮಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈಗೆ ಹೊರಟುಬಂದನು.</verse>
				<verse number="2">ಆಗ ಯೆಹೋವ ದೇವರು ನನಗೆ, “ನೀನು ಅವನಿಗೆ ಭಯಪಡಬೇಡ. ಏಕೆಂದರೆ ನಿನ್ನ ಕೈಯೊಳಗೆ ನಾನು ಅವನನ್ನೂ, ಅವನ ಸಮಸ್ತ ಜನರನ್ನೂ, ಅವನ ದೇಶವನ್ನೂ ಕೊಟ್ಟಿದ್ದೇನೆ. ನೀನು ಹೆಷ್ಬೋನಿನಲ್ಲಿ ವಾಸವಾಗಿದ್ದ ಅಮೋರಿಯರ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಇವನಿಗೂ ಮಾಡಬೇಕು,” ಎಂದರು.</verse>
				<verse number="3">ಈ ಪ್ರಕಾರ ನಮ್ಮ ದೇವರಾದ ಯೆಹೋವ ದೇವರು ಬಾಷಾನಿನ ಅರಸನಾದ ಓಗನನ್ನೂ ಅವನ ಜನರೆಲ್ಲರನ್ನೂ ನಮ್ಮ ಕೈಗಳಲ್ಲಿ ಒಪ್ಪಿಸಿದರು. ಒಬ್ಬನಾದರೂ ತಪ್ಪಿಸಿಕೊಂಡು ಬದುಕುಳಿಯದಂತೆ ಅವರನ್ನು ಹೊಡೆದೆವು.</verse>
				<verse number="4">ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ಜಯಿಸಿದೆವು. ನಾವು ಅವರಿಂದ ವಶಪಡಿಸಿಕೊಳ್ಳದ ಪಟ್ಟಣವು ಒಂದೂ ಇರಲಿಲ್ಲ. ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ, ಅರ್ಗೋಬಿನ ಸಮಸ್ತ ಸುತ್ತಲಿನ ಪ್ರದೇಶದ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.</verse>
				<verse number="5">ಆ ಪಟ್ಟಣಗಳೆಲ್ಲಾ ಎತ್ತರವಾದ ಗೋಡೆ, ಬಾಗಿಲು, ಅಗುಳಿಗಳಿಂದ ಭದ್ರವಾಗಿದ್ದವು. ಅವುಗಳಲ್ಲದೆ ಬಯಲುಸೀಮೆಯ ಪಟ್ಟಣಗಳು ಬಹಳ ಇದ್ದವು.</verse>
				<verse number="6">ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು. ಪುರುಷರನ್ನೂ ಸ್ತ್ರೀಯರನ್ನೂ ಮಕ್ಕಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು.</verse>
				<verse number="7">ಎಲ್ಲಾ ಪಶುಗಳನ್ನೂ ಪಟ್ಟಣಗಳನ್ನೂ ಸೂರೆಮಾಡಿಬಿಟ್ಟೆವು.</verse>
				<verse number="8">ಆ ಕಾಲದಲ್ಲಿ ನಾವು ಯೊರ್ದನ್ ನದಿಯ ಈಚೆಯಲ್ಲಿ ಅರ್ನೋನ್ ನದಿಯಿಂದ ಹೆರ್ಮೋನ್ ಬೆಟ್ಟದವರೆಗೆ ಇರುವ ದೇಶವನ್ನು ಅಮೋರಿಯರ ಇಬ್ಬರು ಅರಸರ ಕೈಯಿಂದ ಸ್ವಾಧೀನಮಾಡಿಕೊಂಡೆವು.</verse>
				<verse number="9">ಹೆರ್ಮೋನಿಗೆ ಸೀದೋನ್ಯರು ಸಿರ್ಯೋನೆಂದೂ ಅಮೋರಿಯರು ಸೆನೀರ್ ಎಂದೂ ಕರೆಯುತ್ತಾರೆ.</verse>
				<verse number="10">ಬಯಲುಸೀಮೆಯ ಎಲ್ಲಾ ಪಟ್ಟಣಗಳನ್ನೂ, ಎಲ್ಲಾ ಗಿಲ್ಯಾದನ್ನೂ ಬಾಷಾನಿನಲ್ಲಿ ಓಗನ ರಾಜ್ಯದಲ್ಲಿ ಪಟ್ಟಣಗಳಾದ ಸಲ್ಕಾ ಎದ್ರೈವರೆಗೆ ಎಲ್ಲಾ ಬಾಷಾನನ್ನೂ ಸ್ವಾಧೀನಮಾಡಿಕೊಂಡೆವು.</verse>
				<verse number="11">ರೆಫಾಯರಲ್ಲಿ ಬಾಷಾನಿನ ಅರಸನಾದ ಓಗನು ಮಾತ್ರ ಉಳಿದಿದ್ದನು. ಅವನ ಮಂಚವು ಕಬ್ಬಿಣದ ಮಂಚ. ಅದು ಅಮ್ಮೋನಿಯರ ರಬ್ಬಾದಲ್ಲಿ ಈಗಲೂ ಉಂಟಲ್ಲವೋ? ಅದರ ಉದ್ದ ಪುರುಷನ ಕೈ ಅಳತೆಯ ಪ್ರಕಾರ ಒಂಬತ್ತು ಮೊಳ, ಅಗಲ ನಾಲ್ಕು ಮೊಳ ಇತ್ತು.</verse>
				<verse number="12">ಆ ಕಾಲದಲ್ಲಿ ನಾವು ಸ್ವತಂತ್ರಿಸಿಕೊಂಡ ದೇಶವನ್ನು ಅರ್ನೋನ್ ಹಳ್ಳದ ಸಮೀಪದಲ್ಲಿರುವ ಅರೋಯೇರಿನಿಂದ ಮೊದಲ್ಗೊಂಡು, ಅರ್ಧ ಗಿಲ್ಯಾದ್ ಬೆಟ್ಟವನ್ನೂ, ಅದರ ಪಟ್ಟಣಗಳನ್ನೂ ರೂಬೇನ್ಯರ ಪ್ರದೇಶದವರೆಗೂ, ಗಾದನ ಪ್ರದೇಶದವರೆಗೂ ಕೊಟ್ಟೆನು.</verse>
				<verse number="13">ಮಿಕ್ಕ ಗಿಲ್ಯಾದನ್ನು ಓಗನ ರಾಜ್ಯವಾದ ಎಲ್ಲಾ ಬಾಷಾನನ್ನೂ ಮನಸ್ಸೆಯ ಅರ್ಧ ಗೋತ್ರಕ್ಕೆ ಕೊಟ್ಟೆನು. ಅರ್ಗೋಬ್ ಎನಿಸಿಕೊಳ್ಳುವ ಸಮಸ್ತ ಸೀಮೆಯನ್ನೂ, ರೆಫಾಯರ ದೇಶವೆಂದು ಎನಿಸಿಕೊಳ್ಳುವ ಸಮಸ್ತ ಬಾಷಾನನ್ನೂ ಅವರಿಗೆ ಕೊಟ್ಟೆನು.</verse>
				<verse number="14">ಮನಸ್ಸೆಯ ಮಗ ಯಾಯೀರನು ಅರ್ಗೋಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯವರೆಗೆ ಸ್ವಾಧೀನಮಾಡಿಕೊಂಡು, ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನವರೆಗೆ ಹವ್ವೋತ್ ಯಾಯೀರೆಂದು ಹೆಸರಿಟ್ಟನು.</verse>
				<verse number="15">ಗಿಲ್ಯಾದನ್ನು ಮಾಕೀರನಿಗೆ ಕೊಟ್ಟೆನು.</verse>
				<verse number="16">ಗಿಲ್ಯಾದ್ ಮೊದಲುಗೊಂಡು ಅರ್ನೋನ್ ತಗ್ಗಿನವರೆಗೂ ಯಬ್ಬೋಕ್ ಹೊಳೆಯವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಕೊಟ್ಟೆನು. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ ಮೇರೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ಹೊಳೆಯು ಅವರ ಮೇರೆ.</verse>
				<verse number="17">ಅದಲ್ಲದೆ ಪಶ್ಚಿಮದಲ್ಲಿ ಅವರ ಪ್ರದೇಶ ಅರಾಬಾದ ಯೊರ್ದನ್ ನದಿಯವರೆಗೆ ಹರಡಿತ್ತು, ಅದರಲ್ಲಿ ಕಿನ್ನೆರೆತ್ ಮೊದಲ್ಗೊಂಡು ಪೂರ್ವದಲ್ಲಿರುವ ಪಿಸ್ಗಾದ ಕೆಳಗಿರುವ ಉಪ್ಪಿನ ಸಮುದ್ರವಾದ ಬಯಲು ಸಮುದ್ರದವರೆಗೆ ವ್ಯಾಪಿಸಿತ್ತು.</verse>
				<verse number="18">ಆ ಕಾಲದಲ್ಲಿ ನಾನು ರೂಬೇನ್ಯರಿಗೂ ಗಾದ್ಯರಿಗೂ ಮತ್ತು ಮನಸ್ಸೆಯ ಅರ್ಧ ಗೋತ್ರಕ್ಕೂ ಆಜ್ಞಾಪಿಸಿದ್ದೇನೆಂದರೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಈ ದೇಶವನ್ನು ಸೊತ್ತಾಗಿ ಕೊಟ್ಟಿದ್ದಾರೆ. ನಿಪುಣರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಆಯುಧ ಧರಿಸಿಕೊಂಡು ನದಿದಾಟಿ ಹೋಗಬೇಕು.</verse>
				<verse number="19">ನಿಮಗೆ ಬಹಳ ಪಶುಗಳಿವೆ ಎಂದು ನನಗೆ ಗೊತ್ತಿದೆ. ಆದರೆ ನಿಮ್ಮ ಹೆಂಡತಿಯರೂ ಮಕ್ಕಳೂ ಪಶುಗಳೂ ನಾನು ನಿಮಗೆ ಕೊಟ್ಟ ಪಟ್ಟಣಗಳಲ್ಲಿ ವಾಸವಾಗಿರಲಿ.</verse>
				<verse number="20">ಯೆಹೋವ ದೇವರು ನಿಮಗೆ ವಿಶ್ರಾಂತಿ ಕೊಟ್ಟ ಹಾಗೆಯೇ ನಿಮ್ಮ ಸಹೋದರರಿಗೂ ವಿಶ್ರಾಂತಿಯನ್ನು ಕೊಡುವರು. ನಿಮ್ಮ ದೇವರಾದ ಯೆಹೋವ ದೇವರು ಯೊರ್ದನಿನ ಆಚೆಯಲ್ಲಿ ಅವರಿಗೆ ಕೊಟ್ಟ ದೇಶವನ್ನು ಅವರು ಸ್ವಾಧೀನಪಡಿಸಿಕೊಳ್ಳುವರು. ಅದುವರೆಗೆ ನೀವು ಅವರೊಂದಿಗೆ ಸೇರಿ ಯುದ್ಧಕ್ಕೆ ಹೋಗಿರಿ. ಅನಂತರ ನಿಮ್ಮಲ್ಲಿ ಪ್ರತಿಯೊಬ್ಬನೂ ನಾನು ನಿಮಗೆ ಕೊಟ್ಟ ಸ್ಥಳಗಳಗೆ ಹಿಂತಿರುಗಿ ಬರಬಹುದು.”</verse>
				<verse number="21">ಆ ಕಾಲದಲ್ಲಿ ನಾನು ಯೆಹೋಶುವನಿಗೆ ಆಜ್ಞಾಪಿಸಿ, “ನಿಮ್ಮ ದೇವರಾದ ಯೆಹೋವ ದೇವರು ಆ ಇಬ್ಬರು ಅರಸರಿಗೆ ಮಾಡಿದ್ದನ್ನೆಲ್ಲಾ ನಿನ್ನ ಕಣ್ಣುಗಳು ನೋಡಿದವು. ನೀನು ಹಾದುಹೋಗುವ ಎಲ್ಲಾ ರಾಜ್ಯಗಳನ್ನೂ ಯೆಹೋವ ದೇವರು ಹಾಗೆಯೇ ಮಾಡುವರು.</verse>
				<verse number="22">ನೀವು ಅವುಗಳಿಗೆ ಭಯಪಡಬೇಡಿರಿ, ನಿಮ್ಮ ದೇವರಾದ ಯೆಹೋವ ದೇವರೇ ನಿಮಗೋಸ್ಕರ ಯುದ್ಧಮಾಡುವರು,” ಎಂದೆನು.</verse>
				<verse number="23">ಆ ಕಾಲದಲ್ಲಿ ನಾನು ಯೆಹೋವ ದೇವರಿಗೆ:</verse>
				<verse number="24">“ಸಾರ್ವಭೌಮ ಯೆಹೋವ ದೇವರೇ, ನೀವು ನಿಮ್ಮ ಸೇವಕನಿಗೆ ನಿಮ್ಮ ಮಹತ್ವವನ್ನೂ ನಿಮ್ಮ ಹಸ್ತಬಲವನ್ನೂ ತೋರಿಸಲಾರಂಭಿಸಿದಿರಿ. ನಿಮ್ಮ ಮಹತ್ಕಾರ್ಯಗಳ ಹಾಗೆಯೂ, ನಿಮ್ಮ ಪರಾಕ್ರಮದ ಹಾಗೆಯೂ ಮಾಡಲು ಶಕ್ತರಾದ ದೇವರು ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ ಯಾರಿದ್ದಾರೆ?</verse>
				<verse number="25">ನಾನು ದಾಟಿ ಹೋಗಿ, ಯೊರ್ದನಿನ ಆಚೆಯಲ್ಲಿರುವ ಆ ಒಳ್ಳೆಯ ದೇಶವನ್ನೂ ಆ ಒಳ್ಳೆಯ ಬೆಟ್ಟವನ್ನೂ ಲೆಬನೋನನ್ನೂ ನೋಡುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಬಿನ್ನೈಸಿದೆನು.</verse>
				<verse number="26">ಆದರೆ ಯೆಹೋವ ದೇವರು ನಿಮ್ಮ ನಿಮಿತ್ತ ನನ್ನ ಮೇಲೆ ಕೋಪಮಾಡಿ, ನನ್ನ ಮನವಿಯನ್ನು ಕೇಳಲಿಲ್ಲ. ಯೆಹೋವ ದೇವರು ನನಗೆ, “ಇನ್ನು ಸಾಕು, ಈ ವಿಷಯದಲ್ಲಿ ನನ್ನ ಸಂಗಡ ಇನ್ನು ಮಾತನಾಡಬೇಡ.</verse>
				<verse number="27">ಪಿಸ್ಗಾದ ತುದಿಗೆ ಏರಿ, ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ, ಪೂರ್ವಕ್ಕೂ ಕಣ್ಣೆತ್ತಿ ಅದನ್ನು ಕಣ್ಣಾರೆ ನೋಡು. ಈ ಯೊರ್ದನನ್ನು ನೀನು ದಾಟಿ ಹೋಗುವುದಿಲ್ಲ.</verse>
				<verse number="28">ಆದರೆ ಯೆಹೋಶುವನಿಗೆ ಆಜ್ಞಾಪಿಸಿ, ಅವನಿಗೆ ದೃಢಮಾಡಿ ಬಲಪಡಿಸು. ಅವನು ಈ ಜನರ ಮುಂದೆ ದಾಟಿ ಹೋಗಿ, ನೀನು ನೋಡುವ ದೇಶವನ್ನು ಅವರಿಗೆ ಸ್ವಾಧೀನಪಡಿಸುವನು,” ಎಂದು ಹೇಳಿದರು.</verse>
				<verse number="29">ಆಗ ನಾವು ಬೇತ್ ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ವಾಸವಾಗಿದ್ದೆವು.</verse>
			</chapter>
			<chapter number="4">
				<verse number="1">ಈಗ ಇಸ್ರಾಯೇಲರೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ, ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿ, ಅವುಗಳನ್ನು ಕೈಗೊಳ್ಳಿರಿ.</verse>
				<verse number="2">ನಾನು ನಿಮಗೆ ಆಜ್ಞಾಪಿಸುವ ವಾಕ್ಯಕ್ಕೆ ಏನನ್ನೂ ಕೂಡಿಸಬೇಡಿರಿ, ಅದರಿಂದ ಏನನ್ನೂ ತೆಗೆಯಬೇಡಿರಿ. ಆದರೆ ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಕೈಗೊಳ್ಳಬೇಕು.</verse>
				<verse number="3">ಬಾಳ್ ಪೆಯೋರನ ವಿಷಯದಲ್ಲಿ ಯೆಹೋವ ದೇವರು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು. ಬಾಳ್ ಪೆಯೋರನನ್ನು ಹಿಂಬಾಲಿಸಿದ ಜನರನ್ನೆಲ್ಲಾ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿದರಲ್ಲವೇ?</verse>
				<verse number="4">ಆದರೆ ನಿಮ್ಮ ದೇವರಾದ ಯೆಹೋವ ದೇವರಿಗೆ ವಿಧೇಯರಾದ ನೀವೆಲ್ಲರು ಇಂದಿನವರೆಗೆ ಬದುಕಿದ್ದೀರಿ.</verse>
				<verse number="5">ನೀವು ಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನೀವು ಮಾಡಬೇಕೆಂದು ನನ್ನ ದೇವರಾದ ಯೆಹೋವ ದೇವರು ನನಗೆ ಆಜ್ಞಾಪಿಸಿದ ಆಜ್ಞಾವಿಧಿಗಳನ್ನೂ ನಿಮಗೆ ಬೋಧಿಸಿದ್ದೇನೆ.</verse>
				<verse number="6">ಹೀಗಿರುವುದರಿಂದ ನೀವು ಅವುಗಳನ್ನು ಎಚ್ಚರದಿಂದ ಕೈಗೊಂಡು ಅನುಸರಿಸಿರಿ. ಏಕೆಂದರೆ ಇತರ ಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು. ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, “ನಿಶ್ಚಯವಾಗಿ ಇದು ದೊಡ್ಡ ಜನಾಂಗವು ಎಂತಹ ಜ್ಞಾನವೂ ವಿವೇಕವೂ ಉಳ್ಳ ಜನಾಂಗವಾಗಿದೆ” ಎನ್ನುವರು.</verse>
				<verse number="7">ನಾವು ನಮ್ಮ ದೇವರಾದ ಯೆಹೋವ ದೇವರಿಗೆ ಮೊರೆಯಿಡುವಾಗೆಲ್ಲಾ ಅವರು ಸಮೀಪವಾಗಿಯೇ ಇದ್ದಾರಲ್ಲಾ. ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವರು?</verse>
				<verse number="8">ಇದಲ್ಲದೆ ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನಿಯಮದ ಪ್ರಕಾರ ನೀತಿ ಮತ್ತು ನ್ಯಾಯನಿಯಮಗಳುಳ್ಳ ದೊಡ್ಡ ಜನಾಂಗ ಯಾವುದು?</verse>
				<verse number="9">ನಿಮ್ಮ ಕಣ್ಣುಗಳಿಂದ ನೋಡಿದ ಕಾರ್ಯಗಳನ್ನು ನೀವು ಮರೆಯದ ಹಾಗೆಯೂ, ನೀವು ಬದುಕುವ ದಿನಗಳೆಲ್ಲಾ ಅವು ನಿಮ್ಮ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು, ಕಾಪಾಡಿಕೊಳ್ಳಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ, ನಿಮ್ಮ ಮಕ್ಕಳ ಮಕ್ಕಳಿಗೂ ಬೋಧಿಸಿರಿ.</verse>
				<verse number="10">ನೀವು ಹೋರೇಬಿನಲ್ಲಿ ಯೆಹೋವ ದೇವರ ಮುಂದೆ ನಿಂತ ದಿವಸದಂದು ದೇವರು ನನಗೆ, “ಜನರನ್ನು ನನಗಾಗಿ ಕೂಡಿಸು, ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿರುವುದನ್ನು ಕಲಿತು, ತಮ್ಮ ಮಕ್ಕಳಿಗೂ ಬೋಧಿಸುವಂತೆ ನಾನು ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡುವೆನು,” ಎಂದರು.</verse>
				<verse number="11">ಆಗ ನೀವು ಹತ್ತಿರ ಬಂದು ಬೆಟ್ಟದ ಕೆಳಗೆ ನಿಂತಿರಿ. ಆ ಬೆಟ್ಟವು ಕತ್ತಲೆಯಾಗಿದ್ದು, ಮೇಘಗಳೂ, ಗಾಢಾಂಧಕಾರವೂ ಉಂಟಾಗಿ ಆಕಾಶ ಮಧ್ಯದವರೆಗೆ ಬೆಂಕಿಯಿಂದ ಉರಿಯುತ್ತಿತ್ತು.</verse>
				<verse number="12">ಬೆಂಕಿಯ ಮಧ್ಯದೊಳಗಿಂದ ಯೆಹೋವ ದೇವರು ನಿಮ್ಮ ಸಂಗಡ ಮಾತಾಡಿದರು. ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ, ಆದರೆ ಆಕಾರವನ್ನು ನೋಡಲಿಲ್ಲ, ಧ್ವನಿಯನ್ನು ಮಾತ್ರ ಕೇಳಿದಿರಿ.</verse>
				<verse number="13">ಅವರು ಹತ್ತು ಆಜ್ಞೆಗಳೆಂಬ ತಮ್ಮ ಒಡಂಬಡಿಕೆಯನ್ನು ನಿಮಗೆ ತಿಳಿಸಿ, ಅದನ್ನು ಮಾಡಬೇಕೆಂದು ನಿಮಗೆ ಆಜ್ಞಾಪಿಸಿ, ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದರು.</verse>
				<verse number="14">ನೀವು ದಾಟಿ ಹೋಗಿ, ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನ್ಯಾಯನಿಯಮಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಯೆಹೋವ ದೇವರು ನನಗೆ ಆಜ್ಞಾಪಿಸಿದರು.</verse>
				<verse number="15">ಆದ್ದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರಿ. ಯೆಹೋವ ದೇವರು ಹೋರೇಬಿನಲ್ಲಿ ಬೆಂಕಿಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿಲ್ಲವಲ್ಲ.</verse>
				<verse number="16">ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಮಾಡಿಕೊಳ್ಳಬೇಡಿರಿ. ಎಂದರೆ, ಸ್ತ್ರೀಪುರುಷರ ರೂಪದಲ್ಲಾಗಲಿ,</verse>
				<verse number="17">ಭೂಮಿಯ ಮೇಲಿರುವ ಯಾವುದೊಂದು ಮೃಗದ ಹೋಲಿಕೆಯನ್ನೂ, ಆಕಾಶದಲ್ಲಿ ಹಾರುವಂಥ ರೆಕ್ಕೆಯುಳ್ಳ ಯಾವುದೊಂದು ಪಕ್ಷಿಯ ಹೋಲಿಕೆಯನ್ನೂ, ಭೂಮಿಯ ಮೇಲೆ ಹರಿದಾಡುವಂಥ ಕ್ರಿಮಿಕೀಟ ಯಾವುದೊಂದರ ಹೋಲಿಕೆಯನ್ನೂ,</verse>
				<verse number="18">ಭೂಮಿಯ ಕೆಳಗಿನ ನೀರುಗಳಲ್ಲಿರುವ ಯಾವುದೊಂದು ಮೀನಿನ ಹೋಲಿಕೆಯ ವಿಗ್ರಹವನ್ನೂ ಮಾಡಬಾರದು.</verse>
				<verse number="19">ನೀವು ನಿಮ್ಮ ಕಣ್ಣುಗಳನ್ನು ಆಕಾಶಕ್ಕೆ ಎತ್ತಿ, ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ, ನಿಮ್ಮ ದೇವರಾದ ಯೆಹೋವ ದೇವರು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಕೊಟ್ಟಿದ್ದಾರೆ. ನೀವು ಅವುಗಳಿಗೆ ಅಡ್ಡಬಿದ್ದು, ಮರುಳುಗೊಂಡು ಅವುಗಳನ್ನು ಪೂಜಿಸದಂತೆಯೂ ನೋಡಿಕೊಳ್ಳಿರಿ.</verse>
				<verse number="20">ನಿಮ್ಮನ್ನಾದರೋ ಯೆಹೋವ ದೇವರು ತಮಗೆ ಸ್ವಕೀಯ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಈಜಿಪ್ಟ್ ದೇಶದಿಂದ ಹೊರತಂದರು.</verse>
				<verse number="21">ನಾನು ಯೊರ್ದನಿನ ಆಚೆಗೆ ಹೋಗದ ಹಾಗೆಯೂ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಆ ಒಳ್ಳೆಯ ದೇಶದಲ್ಲಿ ಪ್ರವೇಶಿಸದಂತೆ, ನಿಮ್ಮ ನಿಮಿತ್ತ ಯೆಹೋವ ದೇವರು ನನ್ನ ಮೇಲೆ ಕೋಪಮಾಡಿಕೊಂಡು ಪ್ರಮಾಣ ಮಾಡಿದರು.</verse>
				<verse number="22">ಆದರೆ ನಾನು ಈ ದೇಶದಲ್ಲಿ ಸಾಯಲೇಬೇಕು. ನಾನು ಯೊರ್ದನಿನ ಆಚೆಗೆ ಹೋಗತಕ್ಕದ್ದಲ್ಲ. ಆದರೆ ನೀವು ಆಚೆಗೆ ಹೋಗಿ, ಆ ಒಳ್ಳೆಯ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ.</verse>
				<verse number="23">ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಡಬೇಡಿರಿ. ನಿಮ್ಮ ದೇವರಾದ ಯೆಹೋವ ದೇವರು ಪೂಜಿಸಬೇಡವೆಂದು ಹೇಳಿದ ಯಾವ ಕೆತ್ತಿದ ವಿಗ್ರಹವನ್ನು ಮಾಡಿಕೊಳ್ಳದಂತೆ ಜಾಗ್ರತೆಯಾಗಿರಿ.</verse>
				<verse number="24">ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ದಹಿಸುವ ಅಗ್ನಿಯೂ, ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತರಾದ ದೇವರೂ ಆಗಿದ್ದಾರೆ.</verse>
				<verse number="25">ನಿಮ್ಮಿಂದ ಮಕ್ಕಳೂ, ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು, ತರುವಾಯ ಯಾವುದಾದರೂ ಕೆತ್ತಿದ ವಿಗ್ರಹವನ್ನು ಮಾಡಿ ನಿಮ್ಮನ್ನು ಕೆಡಿಸಿಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಅವರಿಗೆ ಕೋಪಗೊಳಿಸಿದರೆ,</verse>
				<verse number="26">ನಾನು ಈ ದಿನ ಆಕಾಶವನ್ನೂ, ಭೂಮಿಯನ್ನೂ ಸಾಕ್ಷಿಗೆ ಕರೆದು, ನಿಮಗೆ ಹೇಳುವುದೇನೆಂದರೆ, ನೀವು ಯೊರ್ದನನ್ನು ದಾಟಿ ಸ್ವಾಧೀನಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ, ಸಂಪೂರ್ಣವಾಗಿ ನಶಿಸುವಿರಿ.</verse>
				<verse number="27">ಆಗ ಯೆಹೋವ ದೇವರು ನಿಮ್ಮನ್ನು ದೇಶಗಳಲ್ಲಿ ಚದರಿಸಿಬಿಡುವರು. ಯೆಹೋವ ದೇವರು ನಿಮ್ಮನ್ನು ಅಟ್ಟಿದ ದೇಶಗಳ ಮಧ್ಯದಲ್ಲಿ ನೀವು ಸ್ವಲ್ಪ ಮಂದಿಯಾಗಿ ಉಳಿಯುವಿರಿ.</verse>
				<verse number="28">ಅಲ್ಲಿ ನೀವು ಮನುಷ್ಯರ ಕೈಯಿಂದ ಮಾಡಿದ ಎಂದರೆ, ನೋಡದೆಯೂ, ಕೇಳದೆಯೂ, ಉಣ್ಣದೆಯೂ, ಮೂಸಿ ನೋಡದೆಯೂ ಇರುವಂಥ ಮರ ಮತ್ತು ಕಲ್ಲುಗಳಿಂದ ಮಾಡಿದ ದೇವರುಗಳನ್ನು ಸೇವಿಸುವಿರಿ.</verse>
				<verse number="29">ಆದರೆ ಅಲ್ಲಿಂದಲೂ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು, ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಅವರನ್ನು ಕಂಡುಕೊಳ್ಳುವಿರಿ.</verse>
				<verse number="30">ನೀವು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿಮಗೆ ಸಂಭವಿಸಿದಾಗ, ಕಡೇ ದಿವಸಗಳಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡು ವಿಧೇಯರಾಗಿರಿ.</verse>
				<verse number="31">ನಿಮ್ಮ ದೇವರಾದ ಯೆಹೋವ ದೇವರು ಕರುಣೆಯುಳ್ಳ ದೇವರು, ಅವರು ನಿಮ್ಮನ್ನು ಕೈಬಿಡುವುದಿಲ್ಲ, ನಾಶಮಾಡುವುದಿಲ್ಲ, ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನು ಮರೆಯುವುದಿಲ್ಲ.</verse>
				<verse number="32">ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿದ ಪೂರ್ವಕಾಲವನ್ನು ವಿಚಾರಿಸಿ ನೋಡಿರಿ. ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ವಿಚಾರಿಸಿರಿ. ಇಂಥ ಅದ್ಭುತಕಾರ್ಯ ಉಂಟಾಯಿತೇ? ಇಲ್ಲವೆ ಇಂಥ ಸುದ್ದಿ ಕೇಳಿದ್ದುಂಟ್ಟೋ?</verse>
				<verse number="33">ನೀವು ಕೇಳಿದಂತೆ ಬೆಂಕಿಯೊಳಗಿಂದ ಮಾತನಾಡುವ ದೇವರ ಶಬ್ದವನ್ನು ಕೇಳಿ ಬದುಕಿದ ಜನರು ಇದ್ದಾರೋ?</verse>
				<verse number="34">ನಿಮ್ಮ ದೇವರಾದ ಯೆಹೋವ ದೇವರು ಈಜಿಪ್ಟಿನಲ್ಲಿ ನಿಮ್ಮ ಕಣ್ಣ ಮುಂದೆಯೇ ನಿಮಗೆ ಮಾಡಿದ್ದೆಲ್ಲದರ ಹಾಗೆ ಯಾವ ದೇವರು ಒಂದು ಜನಾಂಗವನ್ನು ಮತ್ತೊಂದು ಜನಾಂಗದಿಂದ ತಮಗಾಗಿ ಆಯ್ದು ತೆಗೆದುಕೊಳ್ಳುವುದಕ್ಕೆ ಪರೀಕ್ಷೆಗಳು, ಗುರುತುಗಳು, ಅದ್ಭುತಗಳು ಇವುಗಳ ಮೂಲಕವಾಗಿಯೂ, ಯುದ್ಧದಿಂದಲೂ, ಭುಜಬಲದಿಂದಲೂ, ಚಾಚಿದ ತೋಳಿನಿಂದಲೂ, ದೊಡ್ಡ ಭಯಗಳಿಂದಲೂ ಪ್ರಯತ್ನ ಮಾಡಿದರೋ?</verse>
				<verse number="35">ಯೆಹೋವ ದೇವರಲ್ಲದೆ ಮತ್ತೊಬ್ಬರಿಲ್ಲ. ಅವರೇ ದೇವರೆಂದು ನೀವು ತಿಳಿದುಕೊಳ್ಳುವುದಕ್ಕಾಗಿ ಇದನ್ನೆಲ್ಲಾ ನಿಮಗೆ ಮಾತ್ರ ತೋರಿಸಲಾಗಿದೆ.</verse>
				<verse number="36">ದೇವರು ನಿಮ್ಮ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತಮ್ಮ ಸ್ವರವನ್ನು ನಿಮಗೆ ಕೇಳಮಾಡಿದರು, ಭೂಮಿಯ ಮೇಲೆ ತಮ್ಮ ದೊಡ್ಡ ಬೆಂಕಿಯನ್ನು ನಿಮಗೆ ತೋರಿಸಿದರು. ನೀವು ಬೆಂಕಿಯೊಳಗಿಂದ ಅವರ ಮಾತುಗಳನ್ನು ಕೇಳಿದಿರಿ.</verse>
				<verse number="37">ದೇವರು ನಿಮ್ಮ ಪಿತೃಗಳನ್ನು ಪ್ರೀತಿಮಾಡಿದ್ದರಿಂದ, ಅವರ ತರುವಾಯ ಅವರ ಸಂತತಿಯನ್ನು ಆಯ್ದುಕೊಂಡು, ನಿಮ್ಮನ್ನು ತಮ್ಮ ದೃಷ್ಟಿಯಲ್ಲಿ ತಮ್ಮ ದೊಡ್ಡ ಬಲದಿಂದ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು.</verse>
				<verse number="38">ದೇವರು ನಿಮಗಿಂತ ದೊಡ್ಡದಾದ, ನಿಮಗಿಂತ ಬಲಿಷ್ಠವಾದ ಜನಾಂಗಗಳನ್ನು ನಿಮ್ಮ ಮುಂದೆ ಓಡಿಸಿ, ನಿಮ್ಮನ್ನು ಅವರ ದೇಶದೊಳಗೆ ಬರಮಾಡಿ, ಈ ದಿನ ನೀವು ಇರುವಂತೆ ನಿಮಗೆ ಅವರ ದೇಶವನ್ನು ಬಳುವಳಿಯಾಗಿ ಕೊಟ್ಟಿದ್ದಾರೆ.</verse>
				<verse number="39">ಹೀಗಿರುವುದರಿಂದ ಮೇಲಿನ ಆಕಾಶದಲ್ಲಿಯೂ, ಕೆಳಗಿನ ಭೂಮಿಯಲ್ಲಿಯೂ ಯೆಹೋವ ದೇವರೇ ದೇವರೆಂದೂ ಮತ್ತೊಬ್ಬರಿಲ್ಲವೆಂಬುದನ್ನೂ ನೀವು ಈಗ ಗ್ರಹಿಸಿಕೊಂಡು ಮನಸ್ಸಿಗೆ ತಂದುಕೊಳ್ಳಿರಿ.</verse>
				<verse number="40">ನಿಮಗೂ, ನಿಮ್ಮ ತರುವಾಯ ನಿಮ್ಮ ಮಕ್ಕಳಿಗೂ ಒಳ್ಳೆಯದು ಆಗುವ ಹಾಗೆಯೂ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀವು ಬಹಳ ದಿವಸವಿರುವ ಹಾಗೆಯೂ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ದೇವರ ನಿಯಮಗಳನ್ನೂ, ಆಜ್ಞೆಗಳನ್ನೂ ಅನುಸರಿಸಿರಿ.</verse>
				<verse number="41">ಮೋಶೆಯು ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಮೂರು ಆಶ್ರಯ ನಗರಗಳನ್ನು ಪ್ರತ್ಯೇಕ ಮಾಡಿದನು.</verse>
				<verse number="42">ಯಾವ ಹಗೆಯಿಲ್ಲದೆ ತನ್ನ ನೆರೆಯವನನ್ನು ಕೈತಪ್ಪಿ ಕೊಂದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳುವಂತೆ ಆ ನಗರಗಳನ್ನು ನೇಮಿಸಿದನು.</verse>
				<verse number="43">ಅವು ಯಾವುವೆಂದರೆ, ರೂಬೇನ್ಯರಿಗೆ ಮರುಭೂಮಿಯ ಬಯಲಿನಲ್ಲಿ ಇರುವ ಬೆಚೆರ್, ಗಾದನವರಿಗೆ ಗಿಲ್ಯಾದಿನ ರಾಮೋತ್, ಮನಸ್ಸೆಯವರಿಗೆ ಬಾಷಾನಿನಲ್ಲಿರುವ ಗೋಲಾನ್.</verse>
				<verse number="44">ಮೋಶೆಯು ಇಸ್ರಾಯೇಲರ ಮುಂದೆ ಇಟ್ಟ ದೇವರ ನಿಯಮವು ಇದೇ.</verse>
				<verse number="45">ಇಸ್ರಾಯೇಲರು ಈಜಿಪ್ಟಿನೊಳಗಿಂದ ಹೊರಟ ಮೇಲೆ ಮೋಶೆಯು ಇಸ್ರಾಯೇಲರಿಗೆ ನುಡಿದ ಸಾಕ್ಷಿಗಳೂ, ನಿಯಮಗಳೂ, ನ್ಯಾಯಗಳೂ ಇವೇ.</verse>
				<verse number="46">ಯೊರ್ದನ್ ನದಿಯ ಆಚೆಯಲ್ಲಿ ಬೇತ್ ಪೆಗೋರಿಗೆ ಎದುರಾಗಿರುವ ತಗ್ಗಿನಲ್ಲಿ ಹೆಷ್ಬೋನಿನಲ್ಲಿ ವಾಸಮಾಡಿದ ಅಮೋರಿಯರ ಅರಸನಾದ ಸೀಹೋನನ ದೇಶದಲ್ಲಿ ಅವನನ್ನು ಮೋಶೆಯೂ, ಇಸ್ರಾಯೇಲರೂ ಈಜಿಪ್ಟಿನೊಳಗಿಂದ ಹೊರಟ ಮೇಲೆ ಸೋಲಿಸಿದರು.</verse>
				<verse number="47">ಸೀಹೋನನ ದೇಶವನ್ನೂ, ಬಾಷಾನಿನ ಅರಸನಾದ ಓಗನ ದೇಶವನ್ನೂ ಯೊರ್ದನಿನ ಆಚೆಯಲ್ಲಿ ಪೂರ್ವದಿಕ್ಕಿನಲ್ಲಿದ್ದ ಅಮೋರಿಯರ ಇಬ್ಬರು ಅರಸರ ದೇಶಗಳನ್ನೂ ಗೆದ್ದುಕೊಂಡರು.</verse>
				<verse number="48">ಅರ್ನೋನ್ ನದಿಯ ತೀರದಲ್ಲಿರುವ ಅರೋಯೇರ್ ಪಟ್ಟಣ ಮೊದಲುಗೊಂಡು ಹೆರ್ಮೋನ್ ಎಂಬ ಸಿರ್ಯೋನ ಪರ್ವತದವರೆಗೂ ಹರಡಿತ್ತು.</verse>
				<verse number="49">ಯೊರ್ದನ್ ನದಿಯ ಆಚೆ ಪೂರ್ವದಿಕ್ಕಿನಲ್ಲಿ ಇರುವ ಎಲ್ಲಾ ಅರಾಬಾದನ್ನು ಸಹ, ಪಿಸ್ಗಾದ ಬೆಟ್ಟದ ತಗ್ಗಿನಲ್ಲಿರುವ ಬಯಲಿನ ಸಮುದ್ರದವರೆಗೆ ಸ್ವಾಧೀನಮಾಡಿಕೊಂಡರು.</verse>
			</chapter>
			<chapter number="5">
				<verse number="1">ಮೋಶೆಯು ಇಸ್ರಾಯೇಲರನ್ನೆಲ್ಲಾ ಕರೆದು ಅವರಿಗೆ ಹೀಗೆ ಹೇಳಿದನು: ಇಸ್ರಾಯೇಲರೇ, ನಾನು ಈ ಹೊತ್ತು ನೀವು ಕೇಳುವಂತೆ ಹೇಳುವ ನಿಯಮಗಳನ್ನೂ, ನ್ಯಾಯಗಳನ್ನೂ ಕೇಳಿರಿ. ಇವುಗಳನ್ನು ಕಲಿತು ಕೈಗೊಂಡು ನಡೆಯಬೇಕು.</verse>
				<verse number="2">ನಮ್ಮ ದೇವರಾದ ಯೆಹೋವ ದೇವರು ಹೋರೇಬಿನಲ್ಲಿ ನಮ್ಮ ಸಂಗಡ ಒಡಂಬಡಿಕೆ ಮಾಡಿಕೊಂಡರು.</verse>
				<verse number="3">ಯೆಹೋವ ದೇವರು ಆ ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದರು. ನಾವೆಲ್ಲರೂ ಈ ಹೊತ್ತು ಇಲ್ಲಿ ಜೀವದಿಂದಿದ್ದೇವೆ.</verse>
				<verse number="4">ಮುಖಾಮುಖಿಯಾಗಿ ಯೆಹೋವ ದೇವರು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಮಾತನಾಡಿದರು.</verse>
				<verse number="5">ಆ ಕಾಲದಲ್ಲಿ ನಾನು ಯೆಹೋವ ದೇವರ ವಾಕ್ಯವನ್ನು ನಿಮಗೆ ತಿಳಿಸಿದ ಹಾಗೆ ಯೆಹೋವ ದೇವರಿಗೂ, ನಿಮಗೂ ನಡುವೆ ನಿಂತಿದ್ದೆನು. ಏಕೆಂದರೆ ನೀವು ಆ ಬೆಂಕಿಗೆ ಭಯಪಟ್ಟು, ಬೆಟ್ಟದ ಮೇಲೆ ಏರಲಿಲ್ಲ. ದೇವರು ಹೇಳಿದ್ದೇನೆಂದರೆ:</verse>
				<verse number="6">“ನಿನ್ನನ್ನು ಈಜಿಪ್ಟ್ ದೇಶದಿಂದಲೂ, ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.</verse>
				<verse number="7">“ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.</verse>
				<verse number="8">ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.</verse>
				<verse number="9">ನೀನು ಅವುಗಳಿಗೆ ಅಡ್ಡ ಬೀಳಬಾರದು ಮತ್ತು ಆರಾಧಿಸಲೂಬಾರದು. ಏಕೆಂದರೆ ನಿನ್ನ ದೇವರಾದ ನಾನು, ನನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತನಾದ ಯೆಹೋವ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆತಾಯಿಗಳ ಅಪರಾಧವನ್ನು ಮಕ್ಕಳ ಮೇಲೆಯೂ ಮೂರನೆಯ ನಾಲ್ಕನೆಯ ತಲೆಗಳವರೆಗೂ ಬರಮಾಡುವೆನು.</verse>
				<verse number="10">ಆದರೆ ನನ್ನನ್ನು ಪ್ರೀತಿಸಿ, ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಸಾವಿರ ತಲೆಗಳವರೆಗೆ ಪ್ರೀತಿ ತೋರಿಸುತ್ತೇನೆ.</verse>
				<verse number="11">ನಿನ್ನ ದೇವರಾದ ಯೆಹೋವ ದೇವರ ಹೆಸರನ್ನು ದುರುಪಯೋಗಮಾಡಬಾರದು, ಏಕೆಂದರೆ ಯೆಹೋವ ದೇವರು ತಮ್ಮ ಹೆಸರನ್ನು ದುರುಪಯೋಗಮಾಡುವವರನ್ನು ಶಿಕ್ಷಿಸದೆ ಬಿಡುವುದಿಲ್ಲ.</verse>
				<verse number="12">ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದಂತೆ ಸಬ್ಬತ್ ದಿನವನ್ನು ಪರಿಶುದ್ಧ ದಿನವೆಂದು ಆಚರಿಸಬೇಕು.</verse>
				<verse number="13">ಆರು ದಿನಗಳಲ್ಲಿ ನೀನು ದುಡಿದು, ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.</verse>
				<verse number="14">ಆದರೆ ಏಳನೆಯ ದಿನ ನಿನ್ನ ದೇವರಾದ ಯೆಹೋವ ದೇವರ ಸಬ್ಬತ್ ದಿನವಾಗಿದೆ. ಅದರಲ್ಲಿ ನೀನಾಗಲೀ, ನಿನ್ನ ಮಗನಾಗಲೀ, ನಿನ್ನ ಮಗಳಾಗಲೀ, ನಿನ್ನ ದಾಸನಾಗಲೀ, ನಿನ್ನ ದಾಸಿಯಾಗಲೀ, ನಿನ್ನ ಎತ್ತೂ, ನಿನ್ನ ಕತ್ತೆಯೂ, ನಿನ್ನ ಎಲ್ಲಾ ಪಶುಗಳೂ, ನಿನ್ನ ಊರಲ್ಲಿರುವ ಅನ್ಯದೇಶದವರು ಸಹ ಯಾವ ಕೆಲಸವನ್ನೂ ಮಾಡಬಾರದು. ನಿನ್ನ ದಾಸನೂ ದಾಸಿಯೂ ನಿನ್ನ ಹಾಗೆ ವಿಶ್ರಮಿಸಿಕೊಳ್ಳಬೇಕು.</verse>
				<verse number="15">ನೀನು ಈಜಿಪ್ಟ್ ದೇಶದಲ್ಲಿ ದಾಸನಾಗಿದ್ದಿಯೆಂದೂ, ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಲ್ಲಿಂದ ಬಲವಾದ ಹಸ್ತದಿಂದಲೂ ಚಾಚಿದ ಭುಜದಿಂದಲೂ ಹೊರಗೆ ಬರಮಾಡಿದರೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದಕಾರಣ ನಿನ್ನ ದೇವರಾದ ಯೆಹೋವ ದೇವರು ನಿನಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಆಜ್ಞಾಪಿಸಿದ್ದಾರೆ.</verse>
				<verse number="16">ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ದೇಶದಲ್ಲಿ ನಿನಗೆ ಒಳ್ಳೆಯದಾಗುವ ಹಾಗೆಯೂ, ನಿನ್ನ ದೇವರಾದ ಯೆಹೋವ ದೇವರು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ, ನಿನ್ನ ತಾಯಿಯನ್ನೂ ಗೌರವಿಸು.</verse>
				<verse number="17">ಕೊಲೆ ಮಾಡಬೇಡ.</verse>
				<verse number="18">ವ್ಯಭಿಚಾರ ಮಾಡಬೇಡ.</verse>
				<verse number="19">ಕದಿಯಬೇಡ.</verse>
				<verse number="20">ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಬೇಡ.</verse>
				<verse number="21">ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ. ನಿನ್ನ ನೆರೆಯವನ ಮನೆಯನ್ನೂ, ಅವನ ಹೊಲವನ್ನೂ, ಅವನ ದಾಸನನ್ನಾಗಲಿ, ಅವನ ದಾಸಿಯನ್ನಾಗಲಿ, ಅವನ ಎತ್ತನ್ನಾಗಲಿ, ಅವನ ಕತ್ತೆಯನ್ನಾಗಲಿ, ನಿನ್ನ ನೆರೆಯವನಿಗೆ ಇರುವ ಯಾವುದನ್ನೂ ಆಶಿಸಬೇಡ.”</verse>
				<verse number="22">ಈ ಮಾತುಗಳನ್ನು ಯೆಹೋವ ದೇವರು ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು, ಇವುಗಳ ಮಧ್ಯದೊಳಗಿಂದ, ನಿಮ್ಮ ಸಭೆಗೆಲ್ಲಾ ಕೇಳಿಸುವಂತೆ ಮಹಾ ಸ್ವರದಿಂದ ನುಡಿದರು. ಅವರು ಹೆಚ್ಚೇನೂ ಕೂಡಿಸಲಿಲ್ಲ. ದೇವರು ಈ ಮಾತುಗಳನ್ನು ಕಲ್ಲಿನ ಎರಡು ಹಲಗೆಗಳಲ್ಲಿ ಬರೆದು ನನಗೆ ಕೊಟ್ಟರು.</verse>
				<verse number="23">ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ, ನೀವು ಕತ್ತಲೆಯಿಂದ ಆ ಸ್ವರವನ್ನು ಕೇಳಿದಾಗ, ನಿಮ್ಮ ಗೋತ್ರಗಳ ಮುಖ್ಯಸ್ಥರೂ, ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ,</verse>
				<verse number="24">“ಇಗೋ, ನಮ್ಮ ದೇವರಾದ ಯೆಹೋವ ದೇವರು ತಮ್ಮ ಮಹಿಮೆಯನ್ನೂ, ತಮ್ಮ ಘನವನ್ನೂ ನಮಗೆ ತೋರಿಸಿದ್ದಾರೆ. ಅವರ ಸ್ವರವನ್ನು ಬೆಂಕಿಯೊಳಗಿಂದ ಕೇಳಿದ್ದೇವೆ. ದೇವರು ಮನುಷ್ಯರ ಸಂಗಡ ಮಾತನಾಡಿದ ಮೇಲೂ, ಅವರು ಬದುಕುತ್ತಾರೆಂದು ಈ ಹೊತ್ತು ನೋಡಿದ್ದೇವೆ.</verse>
				<verse number="25">ಹಾಗಾದರೆ ಈಗ ನಾವು ಏಕೆ ಸಾಯಬೇಕು? ಈ ದೊಡ್ಡ ಬೆಂಕಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವುದು. ನಾವು ಇನ್ನೂ ನಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳಿದರೆ ಸಾಯುತ್ತೇವೆ.</verse>
				<verse number="26">ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳಗಿಂದ ಮಾತನಾಡುವ ಜೀವವುಳ್ಳ ದೇವರ ಸ್ವರವನ್ನು ಕೇಳಿ ಬದುಕಿದರು?</verse>
				<verse number="27">ನೀನೇ ಸಮೀಪಕ್ಕೆ ಹೋಗಿ ನಮ್ಮ ದೇವರಾದ ಯೆಹೋವ ದೇವರು ಹೇಳುವುದನ್ನೆಲ್ಲಾ ಕೇಳಿ, ನಮ್ಮ ದೇವರಾದ ಯೆಹೋವ ದೇವರು ನಿನಗೆ ಹೇಳಿದ್ದನ್ನೆಲ್ಲಾ ನಮಗೆ ಹೇಳು. ಆಗ ನಾವು ಕೇಳಿ ಅದರಂತೆ ಮಾಡುತ್ತೇವೆ,” ಎಂದು ಹೇಳಿದಿರಿ.</verse>
				<verse number="28">ನೀವು ನನ್ನ ಹತ್ತಿರ ಮಾತನಾಡಿದಾಗ, ಯೆಹೋವ ದೇವರು ನಿಮ್ಮ ಮಾತುಗಳನ್ನು ಕೇಳಿ ನನಗೆ, “ಈ ಜನರು ನಿನಗೆ ಹೇಳಿದ ಮಾತುಗಳನ್ನು ಕೇಳಿದ್ದೇನೆ. ಅವರು ಹೇಳಿದ್ದೆಲ್ಲಾ ಒಳ್ಳೆಯದು.</verse>
				<verse number="29">ಅವರು ನನಗೆ ಭಯಪಟ್ಟು, ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಗೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು. ಆಗ ಅವರಿಗೂ, ಅವರ ಮಕ್ಕಳಿಗೂ ಎಂದೆಂದಿಗೂ ಒಳ್ಳೆಯದಾಗುವುದು.”</verse>
				<verse number="30">“ನೀನು ಹೋಗಿ ಅವರಿಗೆ, ‘ನಿಮ್ಮ ಡೇರೆಗಳಿಗೆ ಹಿಂದಿರುಗಿರಿ,’ ಎಂದು ಹೇಳು.</verse>
				<verse number="31">ನೀನಾದರೋ ಇಲ್ಲಿ ನನ್ನ ಸಂಗಡ ನಿಂತುಕೋ. ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸೊತ್ತಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞಾನಿಯಮ ಮತ್ತು ನ್ಯಾಯಗಳನ್ನು ನಿಮಗೆ ಹೇಳುವೆನು.”</verse>
				<verse number="32">ಹೀಗಿರುವುದರಿಂದ ನೀವು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದಂತೆ ಅವುಗಳನ್ನು ಕೈಗೊಂಡು ನಡೆಯಬೇಕು. ಎಡಕ್ಕಾದರೂ, ಬಲಕ್ಕಾದರೂ ತಿರುಗಬೇಡಿರಿ.</verse>
				<verse number="33">ನೀವು ಬದುಕುವ ಹಾಗೆಯೂ, ನಿಮಗೆ ಒಳ್ಳೆಯದಾಗುವ ಹಾಗೆಯೂ, ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಮಾರ್ಗಗಳಲ್ಲೇ ನಡೆದುಕೊಳ್ಳಬೇಕು.</verse>
			</chapter>
			<chapter number="6">
				<verse number="1">ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಬೋಧಿಸಲು ನನಗೆ ನಡೆಸಿದ ಈ ಆಜ್ಞೆಗಳನ್ನೂ, ತೀರ್ಪುಗಳನ್ನೂ, ನಿಯಮಗಳನ್ನೂ ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದವುಗಳು ಇವೇ.</verse>
				<verse number="2">ನೀವೂ, ನಿಮ್ಮ ಮಕ್ಕಳೂ, ನಿಮ್ಮ ಮೊಮ್ಮಕ್ಕಳೂ ತಮ್ಮ ಜೀವನದ ದಿವಸಗಳಲ್ಲೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಕೈಗೊಳ್ಳುವ ಹಾಗೆಯೂ, ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಾನು ನಿಮಗೆ ಕೊಡುವ ದೇವರ ಎಲ್ಲಾ ತೀರ್ಪುಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಬೇಕು.</verse>
				<verse number="3">ಹೀಗಿರುವುದರಿಂದ ಓ ಇಸ್ರಾಯೇಲರೇ, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ವಿಧೇಯರಾಗಿರಿ.</verse>
				<verse number="4">ಇಸ್ರಾಯೇಲರೇ, ಕೇಳಿರಿ: ದೇವರಾದ ಯೆಹೋವ ನಮ್ಮ ದೇವರು; ಯೆಹೋವ ದೇವರು ಒಬ್ಬರೇ.</verse>
				<verse number="5">ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.</verse>
				<verse number="6">ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಮಾತುಗಳು ನಿಮ್ಮ ಹೃದಯದಲ್ಲಿ ಇರಬೇಕು.</verse>
				<verse number="7">ಅವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸ ಮಾಡಿಸಿ, ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯವಾಗಿ ಮಾತನಾಡಬೇಕು.</verse>
				<verse number="8">ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಬೇಕು. ಅವುಗಳನ್ನು ನಿಮ್ಮ ಹಣೆಗೂ ಕಟ್ಟಿಕೊಳ್ಳಬೇಕು.</verse>
				<verse number="9">ಅವುಗಳನ್ನು ನಿಮ್ಮ ಮನೆಯ ನಿಲುವು ಪಟ್ಟಿಗಳ ಮೇಲೆಯೂ ನಿಮ್ಮ ಬಾಗಿಲುಗಳ ಮೇಲೆಯೂ ಬರೆಯಬೇಕು.</verse>
				<verse number="10">ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಾಕೋಬರಿಗೆ ಪ್ರಮಾಣ ಮಾಡಿದ ದೇಶದಲ್ಲಿ ನಿಮ್ಮನ್ನು ಸೇರಿಸಿ, ನೀವು ಕಟ್ಟಿದ ದೊಡ್ಡದಾದ ಒಳ್ಳೆಯ ಪಟ್ಟಣಗಳನ್ನೂ,</verse>
				<verse number="11">ನೀವು ಕೂಡಿಸದ ಉತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನೂ, ನೀವು ಅಗೆಯದಿರುವ ಬಾವಿಗಳನ್ನೂ, ನೀವು ನೆಡದ ದ್ರಾಕ್ಷಿತೋಟಗಳನ್ನೂ, ಓಲಿವ್ ತೋಟಗಳನ್ನೂ ನಿಮಗೆ ಕೊಡಲಾಗಿ, ನೀವು ತಿಂದು ತೃಪ್ತರಾಗಿರುವಿರಿ.</verse>
				<verse number="12">ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ಯೆಹೋವ ದೇವರನ್ನು ಮರೆಯದ ಹಾಗೆ ನೋಡಿಕೊಳ್ಳಿರಿ.</verse>
				<verse number="13">ನಿಮ್ಮ ದೇವರಾದ ಯೆಹೋವ ದೇವರಿಗೆ ನೀವು ಭಯಪಡಬೇಕು. ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು ಮತ್ತು ಅವರ ಹೆಸರಿನಲ್ಲಿ ಆಣೆಯಿಟ್ಟುಕೊಳ್ಳಬೇಕು.</verse>
				<verse number="14">ನಿಮ್ಮ ಸುತ್ತಲಿರುವ ಜನರ ದೇವರುಗಳಾಗಿರುವ ಬೇರೆ ದೇವರುಗಳನ್ನು ನೀವು ಹಿಂಬಾಲಿಸಬೇಡಿರಿ.</verse>
				<verse number="15">ಏಕೆಂದರೆ ನಿಮ್ಮ ಮಧ್ಯದಲ್ಲಿರುವ ನಿಮ್ಮ ಯೆಹೋವ ದೇವರು ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ಸ್ವಾಮ್ಯಾಸಕ್ತರಾದ ದೇವರು. ನಿಮ್ಮ ದೇವರ ಕೋಪವು ನಿಮ್ಮ ಮೇಲೆ ಉರಿಯಲು, ಅವರು ನಿಮ್ಮನ್ನು ಭೂಮಿಯ ಮೇಲಿನಿಂದ ತೆಗೆದುಹಾಕುವರು.</verse>
				<verse number="16">ನೀವು ಮಸ್ಸದಲ್ಲಿ ಪರೀಕ್ಷಿಸಿದ ಹಾಗೆ ನಿಮ್ಮ ದೇವರಾದ ಯೆಹೋವ ದೇವರನ್ನು ಪರೀಕ್ಷಿಸಬಾರದು.</verse>
				<verse number="17">ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನೂ, ಅವರು ನಿಮಗೆ ನೀಡಿದ ಷರತ್ತುಗಳನ್ನೂ, ಅವರ ತೀರ್ಪುಗಳನ್ನೂ ಎಚ್ಚರಿಕೆಯಿಂದ ಕೈಗೊಳ್ಳಬೇಕು.</verse>
				<verse number="18">ನಿಮಗೆ ಒಳ್ಳೆಯದಾಗುವಂತೆಯೂ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ಒಳ್ಳೆಯ ದೇಶವನ್ನು ನೀವು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವಂತೆಯೂ ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೂ, ಒಳ್ಳೆಯದನ್ನೂ ಮಾಡಿರಿ.</verse>
				<verse number="19">ಆಗ ಯೆಹೋವ ದೇವರು ತಾವು ಹೇಳಿದಂತೆ ನಿಮ್ಮ ಎಲ್ಲಾ ಶತ್ರುಗಳನ್ನು ನಿಮ್ಮ ಮುಂದೆಯೇ ಓಡಿಸಿಬಿಡುವರು.</verse>
				<verse number="20">ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು, “ನಮ್ಮ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಈ ಷರತ್ತುಗಳ, ತೀರ್ಪುಗಳ ಹಾಗು ನಿಯಮಗಳ ಅರ್ಥ ಏನು?” ಎಂದು ನಿಮ್ಮನ್ನು ಕೇಳುವರು.</verse>
				<verse number="21">ಆಗ ನೀವು ಅವರಿಗೆ, “ನಾವು ಈಜಿಪ್ಟ್ ದೇಶದಲ್ಲಿ ಫರೋಹನನಿಗೆ ದಾಸರಾಗಿದ್ದೆವು. ಯೆಹೋವ ದೇವರು ಬಲವಾದ ಕೈಯಿಂದ ನಮ್ಮನ್ನು ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು.</verse>
				<verse number="22">ಯೆಹೋವ ದೇವರು ನಮ್ಮ ಕಣ್ಣ ಮುಂದೆಯೇ ಈಜಿಪ್ಟಿನ ಮೇಲೆಯೂ, ಫರೋಹನ ಮೇಲೆಯೂ, ಅವನ ಎಲ್ಲಾ ಮನೆಯ ಮೇಲೆಯೂ ಭಯಂಕರವಾದ ದೊಡ್ಡ ಗುರುತುಗಳನ್ನೂ, ಅದ್ಭುತಗಳನ್ನೂ ಕಳುಹಿಸಿದರು.</verse>
				<verse number="23">ಆದರೆ ದೇವರು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶವನ್ನು ನಮಗೆ ಕೊಡುವಂತೆಯೂ ನಾವು ಅದರಲ್ಲಿ ಪ್ರವೇಶ ಮಾಡುವಂತೆಯೂ ನಮ್ಮನ್ನು ಈಜಿಪ್ಟಿನಿಂದ ಬರಮಾಡಿದರು.</verse>
				<verse number="24">ನಮಗೆ ಎಂದೆಂದಿಗೂ ಒಳ್ಳೆಯದಾಗುವಂತೆಯೂ, ಇಂದಿನಂತೆ ನಾವು ಬದುಕುವಂತೆಯೂ, ನಾವು ಈ ನಿಯಮಗಳನ್ನೆಲ್ಲಾ ಕೈಗೊಂಡು ನಮ್ಮ ಯೆಹೋವ ದೇವರಿಗೆ ಭಯಪಡಬೇಕೆಂದು ಅವರು ನಮಗೆ ಆಜ್ಞಾಪಿಸಿದ್ದಾರೆ.</verse>
				<verse number="25">ಅವರು ನಮಗೆ ಆಜ್ಞಾಪಿಸಿದಂತೆ ನಮ್ಮ ದೇವರಾದ ಯೆಹೋವ ದೇವರ ಮುಂದೆ ಈ ಎಲ್ಲಾ ಆಜ್ಞೆಯನ್ನು ಕೈಗೊಂಡು ನಡೆದರೆ, ಅದು ನಮಗೆ ನೀತಿಯಾಗಿರುವುದು,” ಎಂದು ಹೇಳಬೇಕು.</verse>
			</chapter>
			<chapter number="7">
				<verse number="1">ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಬರಮಾಡಿದಾಗ, ಅವರು ನಿಮಗಿಂತ ದೊಡ್ಡವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಎಂದರೆ, ಗಿರ್ಗಾಷಿಯರನ್ನೂ ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗಗಳನ್ನು ನಿಮ್ಮ ಮುಂದೆಯೇ ಹೊರಡಿಸುವರು.</verse>
				<verse number="2">ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ದಂಡಿಸಿ ಸಂಪೂರ್ಣವಾಗಿ ತೆಗೆದುಹಾಕಿಬಿಡುವರು. ಅವರ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು. ಅವರಿಗೆ ದಯೆ ತೋರಿಸಬಾರದು.</verse>
				<verse number="3">ಅವರ ಸಂಗಡ ಮದುವೆ ಮಾಡಿಕೊಳ್ಳಬಾರದು. ನಿಮ್ಮ ಪುತ್ರಿಯರನ್ನು ಅವರ ಮಕ್ಕಳಿಗೆ ಕೊಡಬಾರದು. ನಿಮ್ಮ ಪುತ್ರರಿಗೆ ಅವರ ಪುತ್ರಿಯರನ್ನು ತೆಗೆದುಕೊಳ್ಳಬಾರದು.</verse>
				<verse number="4">ಏಕೆಂದರೆ ಅವರು ನಿಮ್ಮ ಪುತ್ರರನ್ನು ಬೇರೆ ದೇವರುಗಳನ್ನು ಸೇವಿಸುವ ಹಾಗೆ ನನ್ನಿಂದ ತೊಲಗಿಸಿಬಿಡುವರು. ಆಗ ಯೆಹೋವ ದೇವರು ನಿಮ್ಮ ಮೇಲೆ ಕೋಪಗೊಂಡು, ನಿಮ್ಮನ್ನು ಬೇಗ ದಂಡಿಸಿಬಿಡುವರು.</verse>
				<verse number="5">ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು. ಅವರ ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. ನೀವು ಅವರಿಗೆ ಹೀಗೆ ಮಾಡತಕ್ಕದ್ದು.</verse>
				<verse number="6">ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರು. ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ತಮಗೆ ಸ್ವಂತ ಜನರಾಗಿರಲು ತಮ್ಮ ಆಸ್ತಿಯಾಗಿ ಆರಿಸಿಕೊಂಡಿದ್ದಾರೆ.</verse>
				<verse number="7">ನೀವು ಎಲ್ಲಾ ಜನರಿಗಿಂತ ಹೆಚ್ಚಾಗಿರುವ ಕಾರಣ ಯೆಹೋವ ದೇವರು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ. ನೀವು ಎಲ್ಲಾ ಜನರಿಗಿಂತ ಸಂಖ್ಯಾತರು.</verse>
				<verse number="8">ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದಲೂ, ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುವುದರಿಂದಲೂ, ಯೆಹೋವ ದೇವರು ನಿಮ್ಮನ್ನು ಬಲವಾದ ಕೈಯಿಂದ ಹೊರಗೆ ಬರಮಾಡಿ ನಿಮ್ಮನ್ನು ಗುಲಾಮತನದಿಂದಲೂ, ಈಜಿಪ್ಟಿನ ಅರಸನಾದ ಫರೋಹನ ಕೈಯಿಂದಲೂ ವಿಮೋಚಿಸಿದರು.</verse>
				<verse number="9">ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರು ಒಬ್ಬರೇ ದೇವರು; ಅವರೇ ನಂಬಿಗಸ್ತರಾದ ದೇವರು; ತಮ್ಮನ್ನು ಪ್ರೀತಿಸಿ, ತಮ್ಮ ಆಜ್ಞೆಗಳನ್ನು ಕೈಗೊಳ್ಳುವವರಿಗೆ, ಅವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಸಾವಿರ ತಲೆಗಳವರೆಗೂ ತೋರಿಸುವರು.</verse>
				<verse number="10">ಆದರೆ, ತಮ್ಮನ್ನು ಹಗೆಮಾಡುವವರಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ಅವರನ್ನು ತೆಗೆದುಹಾಕುತ್ತಾರೆ. ದೇವರು ತಮ್ಮನ್ನು ಹಗೆಮಾಡುವವರಿಗೆ ತಡಮಾಡದೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ ಎಂದು ತಿಳಿದುಕೊಳ್ಳಿರಿ.</verse>
				<verse number="11">ಹೀಗಿರುವುದರಿಂದ ನಾನು ಈ ಹೊತ್ತು ನಿಮಗೆ ಕೊಡುವ ಆಜ್ಞೆಗಳನ್ನೂ, ತೀರ್ಪುಗಳನ್ನೂ, ನಿಯಮಗಳನ್ನು ಕೈಗೊಳ್ಳಬೇಕು.</verse>
				<verse number="12">ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದುಕೊಂಡರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಒಡಂಬಡಿಕೆಯನ್ನೂ, ಕರುಣೆಯನ್ನೂ ನಿಮಗೋಸ್ಕರ ನೆರವೇರಿಸುವರು.</verse>
				<verse number="13">ಅವರು ನಿಮ್ಮನ್ನು ಪ್ರೀತಿಸಿ, ನಿಮ್ಮನ್ನು ಆಶೀರ್ವದಿಸಿ, ನಿಮ್ಮನ್ನು ಅಭಿವೃದ್ಧಿಗೊಳಿಸಿ ಮತ್ತು ನಿಮಗೆ ಕೊಡುತ್ತೇನೆಂದು ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಆ ದೇಶದಲ್ಲಿ ನಿಮ್ಮ ಗರ್ಭದ ಫಲವನ್ನೂ ಅಂದರೆ, ಭೂಮಿಯ ಹುಟ್ಟುವಳಿಯನ್ನೂ, ನಿಮ್ಮ ಧಾನ್ಯವನ್ನೂ, ನಿಮ್ಮ ಹೊಸ ದ್ರಾಕ್ಷಾರಸವನ್ನೂ, ನಿಮ್ಮ ಎಣ್ಣೆಯನ್ನೂ, ನಿಮ್ಮ ಪಶುಗಳನ್ನೂ, ನಿಮ್ಮ ಕುರಿಗಳ ಮಂದೆಗಳನ್ನೂ ಆಶೀರ್ವದಿಸುವರು.</verse>
				<verse number="14">ಎಲ್ಲಾ ಜನರಿಗಿಂತಲೂ ನೀವು ಆಶೀರ್ವಾದಕ್ಕೆ ಪಾತ್ರರಾಗಿರುವಿರಿ. ನಿಮ್ಮೊಳಗೆ ಸ್ತ್ರೀ ಪುರುಷರಲ್ಲಾಗಲಿ, ಹೆಣ್ಣು ಗಂಡು ಪಶುಗಳಲ್ಲಿಯಾಗಲಿ ಬಂಜೆತನವು ಇರುವುದಿಲ್ಲ.</verse>
				<verse number="15">ಯೆಹೋವ ದೇವರು ಎಲ್ಲಾ ರೋಗಗಳನ್ನು ನಿಮ್ಮಿಂದ ತೆಗೆದುಬಿಡುವರು. ನಿಮಗೆ ತಿಳಿದಿರುವ ಈಜಿಪ್ಟಿನ ಕ್ರೂರರೋಗಗಳನ್ನು ನಿಮ್ಮ ಮೇಲೆ ಬರಮಾಡದ, ನಿಮ್ಮನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರಮಾಡುವರು.</verse>
				<verse number="16">ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಒಪ್ಪಿಸುವ ಜನರನ್ನೆಲ್ಲಾ ನೀವು ಸಂಹರಿಸಬೇಕು. ಅವರ ಮೇಲೆ ನೀವು ಕಟಾಕ್ಷವಿಡಬಾರದು. ಅವರ ದೇವರುಗಳನ್ನು ಆರಾಧಿಸಬಾರದು. ಏಕೆಂದರೆ ಅವು ನಿಮಗೆ ಉರುಲಾಗುವವು.</verse>
				<verse number="17">“ಈ ಜನಾಂಗದವರು ನಮಗಿಂತ ಹೆಚ್ಚು ಮಂದಿ ಇದ್ದಾರೆ. ನಾವು ಹೇಗೆ ಅವರನ್ನು ವಶಮಾಡಿಕೊಳ್ಳಬೇಕು?” ಎಂದು ನಿಮ್ಮ ಹೃದಯದಲ್ಲಿ ಅಂದುಕೊಳ್ಳುವಿರೋ?</verse>
				<verse number="18">ನೀವು ಅವರಿಗೆ ಭಯಪಡಬೇಡಿರಿ. ನಿಮ್ಮ ದೇವರಾದ ಯೆಹೋವ ದೇವರು ಫರೋಹನಿಗೂ, ಎಲ್ಲಾ ಈಜಿಪ್ಟಿನವರಿಗೂ ಮಾಡಿದ್ದನ್ನು</verse>
				<verse number="19">ಕಣ್ಣಾರೆ ನೋಡಿದ ದೊಡ್ಡ ಉಪದ್ರವಗಳನ್ನೂ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ, ಅದ್ಭುತಗಳನ್ನೂ, ದೇವರ ಬಲವಾದ ಹಸ್ತವನ್ನೂ, ಚಾಚಿದ ತೋಳನ್ನೂ ನೀವು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀವು ಯಾವ ಜನರಿಗೆ ಭಯಪಡುತ್ತೀರೋ, ಆ ಜನರಿಗೆಲ್ಲಾ ನಿಮ್ಮ ದೇವರಾದ ಯೆಹೋವ ದೇವರು ಹಾಗೆಯೇ ಮಾಡುವರು.</verse>
				<verse number="20">ಇದಲ್ಲದೆ ಉಳಿದವರೂ, ನಿಮಗೆ ಮರೆಯಾಗಿ ಉಳುಕೊಂಡವರೂ ನಾಶವಾಗುವ ತನಕ ನಿಮ್ಮ ದೇವರಾದ ಯೆಹೋವ ದೇವರು ಕಣಜದ ಹುಳವನ್ನು ಅವರಲ್ಲಿ ಕಳುಹಿಸುವರು.</verse>
				<verse number="21">ಅವರಿಗೆ ಹೆದರಬೇಡಿರಿ. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಭಯಭಕ್ತಿಗೆ ಯೋಗ್ಯರಾದ ಮಹಾ ದೇವರಾಗಿ ನಿಮ್ಮ ಮಧ್ಯದಲ್ಲಿದ್ದಾರೆ.</verse>
				<verse number="22">ನಿಮ್ಮ ದೇವರಾದ ಯೆಹೋವ ದೇವರು ಆ ಜನಾಂಗಗಳನ್ನು ನಿಮ್ಮ ಮುಂದೆ ಸ್ವಲ್ಪ ಸ್ವಲ್ಪವಾಗಿ ಹೊರಗೆ ಹಾಕುವರು. ನೀವು ಅವರನ್ನು ತ್ವರೆಯಾಗಿ ಸಂಹರಿಸಬಾರದು. ಹಾಗೆ ಮಾಡಿದರೆ, ಕಾಡುಮೃಗಗಳು ಹೆಚ್ಚಾಗಿ ನಿಮಗೆ ತೊಂದರೆಕೊಡುವುವು.</verse>
				<verse number="23">ಆದರೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮಗೆ ಒಪ್ಪಿಸಿಬಿಡುವರು. ಅವರು ಸೋತುಹೋಗಿ ಇಲ್ಲದಂತಾಗುವರು.</verse>
				<verse number="24">ದೇವರು ಅವರ ಅರಸರನ್ನು ನಿಮಗೆ ಒಪ್ಪಿಸುವರು. ನೀವು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ದಂಡಿಸುವಿರಿ. ನೀವು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿಮ್ಮ ಮುಂದೆ ನಿಲ್ಲಲಾರನು.</verse>
				<verse number="25">ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು. ಅವುಗಳ ಮೇಲಿರುವ ಬೆಳ್ಳಿಬಂಗಾರವನ್ನು ಆಶಿಸಿ ನೀವು ತೆಗೆದುಕೊಳ್ಳಬಾರದು. ಅದು ನಿಮಗೆ ಉರುಲಾದೀತು. ಏಕೆಂದರೆ ಅದು ನಿಮ್ಮ ದೇವರಾದ ಯೆಹೋವ ದೇವರಿಗೆ ಅಸಹ್ಯವೇ.</verse>
				<verse number="26">ನೀವು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿಮ್ಮ ಮನೆಗೆ ತೆಗೆದುಕೊಂಡು ಬರಬಾರದು. ಅದನ್ನು ಕೆಟ್ಟದಾಗಿ ಪರಿಗಣಿಸಿ ಮತ್ತು ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು, ಏಕೆಂದರೆ ಅದು ಶಾಪಗ್ರಸ್ತವಾದದ್ದು.</verse>
			</chapter>
			<chapter number="8">
				<verse number="1">ನೀವು ಬದುಕಿ ಅಭಿವೃದ್ಧಿಯಾಗಿ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಿ, ಅದನ್ನು ಸ್ವಾಧೀನ ಮಾಡಿಕೊಳ್ಳುವ ಹಾಗೆ ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ಲಕ್ಷ್ಯವಿಟ್ಟು ಕೈಗೊಳ್ಳಿರಿ.</verse>
				<verse number="2">ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ತಗ್ಗಿಸಿ, ನೀವು ದೇವರ ಆಜ್ಞೆಗಳನ್ನು ಕಾಪಾಡುವಿರೋ ಇಲ್ಲವೋ ಎಂದು ನಿಮ್ಮ ಹೃದಯವನ್ನು ಪರೀಕ್ಷಿಸುವುದಕ್ಕೆ ನಿಮ್ಮನ್ನು ನಡೆಸಿದ ಮಾರ್ಗವನ್ನೆಲ್ಲಾ ಜ್ಞಾಪಕಮಾಡಿಕೊಳ್ಳಿರಿ.</verse>
				<verse number="3">ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ ಯೆಹೋವ ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಬದುಕುತ್ತಾನೆಂದು ನಿಮಗೆ ಬೋಧಿಸುವಂತೆ ದೇವರು ನಿಮ್ಮನ್ನು ಹಸಿವೆಯಿಂದ ಬಳಲುವಂತೆ ಮಾಡಿದರು. ನೀವು ತಿಳಿಯದಂಥ ಮತ್ತು ನಿಮ್ಮ ಪಿತೃಗಳು ತಿಳಿಯದಂಥ ಮನ್ನವನ್ನು ನಿಮಗೆ ಉಣ್ಣಲು ಕೊಟ್ಟರು.</verse>
				<verse number="4">ಈ ನಲವತ್ತು ವರ್ಷ ನಿಮ್ಮ ಮೇಲಿರುವ ವಸ್ತ್ರಗಳು ಹಳೆಯದಾಗಲಿಲ್ಲ, ನಿಮ್ಮ ಕಾಲುಗಳು ಬಾತುಹೋಗಲಿಲ್ಲ.</verse>
				<verse number="5">ಇದಲ್ಲದೆ ಒಬ್ಬನು ತನ್ನ ಮಗನನ್ನು ಶಿಸ್ತುಪಡಿಸುವ ಪ್ರಕಾರ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಶಿಸ್ತಿನಿಂದ ನಡೆಸುತ್ತಾ ಬಂದರೆಂದು ನಿಮ್ಮ ಹೃದಯದಲ್ಲಿ ತಿಳಿದುಕೊಳ್ಳಿರಿ.</verse>
				<verse number="6">ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಕೈಗೊಂಡು, ಅವರ ಮಾರ್ಗಗಳಲ್ಲಿ ನಡೆದು ಅವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು.</verse>
				<verse number="7">ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಒಳ್ಳೆಯ ದೇಶಕ್ಕೆ ಬರಮಾಡುತ್ತಾರೆ. ಅದು ನೀರಿನ ಹಳ್ಳಗಳೂ, ತಗ್ಗುಗಳಲ್ಲಿಯೂ, ಬೆಟ್ಟದಲ್ಲಿಯೂ, ಉಕ್ಕುವ ಬುಗ್ಗೆಗಳೂ ಇರುವ ದೇಶವಾಗಿರುತ್ತದೆ.</verse>
				<verse number="8">ಆ ದೇಶದಲ್ಲಿ ಗೋಧಿಯೂ, ಜವೆಗೋಧಿಯೂ, ದ್ರಾಕ್ಷೆಯೂ, ಅಂಜೂರ ಮರಗಳೂ, ದಾಳಿಂಬೆಗಳೂ ಇರುತ್ತವೆ. ಅದು ಓಲಿವ್ ಎಣ್ಣೆಯೂ, ಜೇನೂ ಉಳ್ಳ ದೇಶವೇ.</verse>
				<verse number="9">ಆ ದೇಶದಲ್ಲಿ ನಿಮಗೆ ಆಹಾರಕ್ಕೆ ಕೊರತೆ ಇರುವುದಿಲ್ಲ. ಅಲ್ಲಿ ಯಾವುದರ ಕೊರತೆ ನಿಮಗೆ ಆಗದು. ಅದರ ಕಲ್ಲುಗಳಲ್ಲಿ ಕಬ್ಬಿಣವನ್ನೂ, ಅದರ ಬೆಟ್ಟಗಳಲ್ಲಿ ತಾಮ್ರದ ಗಣಿಗಳನ್ನೂ ಅಗೆಯಬಹುದು.</verse>
				<verse number="10">ನೀವು ತಿಂದು ತೃಪ್ತಿ ಹೊಂದಿದಾಗ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಒಳ್ಳೆಯ ದೇಶದಲ್ಲಿ ಅವರನ್ನು ಸ್ತುತಿಸಬೇಕು.</verse>
				<verse number="11">ನಾನು ಈ ಹೊತ್ತು ನಿಮಗೆ ಕೊಡುವ ದೇವರ ಆಜ್ಞೆಗಳನ್ನೂ ನಿಯಮಗಳನ್ನೂ ತೀರ್ಪುಗಳನ್ನೂ ಕೈಕೊಳ್ಳದವರೂ, ಯೆಹೋವ ದೇವರನ್ನು ಮರೆಯದವರೂ ಆಗದಂತೆ ನೋಡಿಕೊಳ್ಳಿರಿ.</verse>
				<verse number="12">ನೀವು ತಿಂದು ತೃಪ್ತಿಹೊಂದಿ, ಒಳ್ಳೆಯ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ,</verse>
				<verse number="13">ನಿಮ್ಮ ಪಶು ಕುರಿಗಳು ಹೆಚ್ಚಿದಾಗಲೂ, ಬೆಳ್ಳಿಬಂಗಾರ ನಿಮಗೆ ಹೆಚ್ಚಿದಾಗಲೂ, ನಿಮಗಿರುವ ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ,</verse>
				<verse number="14">ನಿಮ್ಮ ಹೃದಯವು ಗರ್ವಗೊಂಡು, ನಿಮ್ಮನ್ನು ಈಜಿಪ್ಟ್ ದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ ನಿಮ್ಮ ದೇವರಾದ ಯೆಹೋವ ದೇವರನ್ನೇ ಮರೆತುಬಿಡಬೇಡಿರಿ.</verse>
				<verse number="15">ದೇವರು ಅಗ್ನಿಸರ್ಪಗಳೂ, ಚೇಳುಗಳೂ ತುಂಬಿದ ಮತ್ತು ನೀರಿಲ್ಲದ ಆ ಭಯಂಕರವಾದ ವಿಶಾಲ ಮರುಭೂಮಿಯಲ್ಲಿ ನಿಮ್ಮನ್ನು ನಡೆಸಿ, ಗಟ್ಟಿಯಾದ ಬಂಡೆಯೊಳಗಿಂದ ನಿಮಗೆ ನೀರು ಬರಮಾಡಿದರು.</verse>
				<verse number="16">ನಿಮ್ಮನ್ನು ದೀನತ್ವಕೆ ಒಳಪಡಿಸಿ, ಪರೀಕ್ಷಿಸಿದ ನಂತರ, ಕಡೆಯಲ್ಲಿ ನಿಮಗೆ ಒಳ್ಳೆಯದನ್ನು ಮಾಡುವಂತೆ ನಿಮ್ಮ ಪಿತೃಗಳು ಅರಿಯದ ಮನ್ನವನ್ನು ಮರುಭೂಮಿಯಲ್ಲಿ ನಿಮಗೆ ಪೋಷಿಸಿದರು.</verse>
				<verse number="17">ನಿಮ್ಮ ದೇವರಾದ ಯೆಹೋವ ದೇವರನ್ನು ಮರೆತು, “ನಮ್ಮ ಹಸ್ತ ಬಲ ಸಾಮರ್ಥ್ಯವೇ ನಮಗೆ ಈ ಆಸ್ತಿಯನ್ನು ಸಂಪಾದಿಸಿತು,” ಎಂದು ನಿಮ್ಮ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೊಳ್ಳಿರಿ.</verse>
				<verse number="18">ನಿಮ್ಮ ದೇವರಾದ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರೇ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸುವಂತೆ ಇಂದು ನೀವು ಇಷ್ಟು ಆಸ್ತಿಯನ್ನು ಸಂಪಾದಿಸುವ ಸಾಮರ್ಥ್ಯವನ್ನು ನಿಮಗೆ ಕೊಟ್ಟಿದ್ದಾರೆ.</verse>
				<verse number="19">ಒಂದು ವೇಳೆ ನೀವು ನಿಮ್ಮ ಯೆಹೋವ ದೇವರನ್ನು ಮರೆತು, ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ, ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧವಾಗಿ ಈ ಹೊತ್ತು ಸಾಕ್ಷಿ ಹೇಳುತ್ತೇನೆ.</verse>
				<verse number="20">ನೀವು ನಿಮ್ಮ ಯೆಹೋವ ದೇವರ ಮಾತಿಗೆ ವಿಧೇಯರಾಗದ ಕಾರಣ ಅವರು ನಿಮ್ಮ ಮುಂದೆ ನಾಶಮಾಡುವ ಇತರ ಜನಾಂಗಗಳ ಹಾಗೆಯೇ ನೀವೂ ನಾಶವಾಗಿಹೋಗುವಿರಿ.</verse>
			</chapter>
			<chapter number="9">
				<verse number="1">ಇಸ್ರಾಯೇಲರೇ, ಕೇಳಿರಿ, ನೀವು ಹೋಗಿ ನಿಮಗಿಂತ ದೊಡ್ಡ, ಬಲಿಷ್ಠ ಜನಾಂಗಗಳನ್ನೂ, ಆಕಾಶದವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವುದಕ್ಕೆ ಈ ಹೊತ್ತು ಯೊರ್ದನ್ ನದಿಯನ್ನು ದಾಟಲಿದ್ದೀರಿ.</verse>
				<verse number="2">ಆ ನಾಡಿನ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ. “ಅನಾಕ್ಯರ ಮುಂದೆ ಯಾರು ನಿಲ್ಲುವರು?” ಎಂಬ ಮಾತನ್ನು ಅವರ ಬಗ್ಗೆ ಕೇಳಿದ್ದೀರಿ.</verse>
				<verse number="3">ಹೀಗಿರುವುದರಿಂದ ನೀವು ಈ ಹೊತ್ತು ತಿಳಿದುಕೊಳ್ಳತಕ್ಕದ್ದೇನೆಂದರೆ, ನಿಮ್ಮ ದೇವರಾದ ಯೆಹೋವ ದೇವರೇ ನಿಮ್ಮ ಮುಂದೆ ಹೋಗುತ್ತಾರೆ. ಅವರು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡುವರು. ದೇವರು ಅವರನ್ನು ನಿಮ್ಮ ಮುಂದೆ ಸೋಲಿಸುವರು. ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನೀವು ಅವರನ್ನು ಸ್ವಾಧೀನಪಡಿಸಿಕೊಂಡು ಅವರನ್ನು ಬೇಗ ತೆಗೆದುಹಾಕುವಿರಿ.</verse>
				<verse number="4">ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ತೆಗೆದುಹಾಕಿದಾಗ, “ಯೆಹೋವ ದೇವರು ನಮ್ಮನ್ನು ಈ ದೇಶವನ್ನು ಸ್ವಾಧೀನಪಡಿಸಲು ಕರೆದುಕೊಂಡು ಬಂದಿದ್ದು ನಮ್ಮ ನೀತಿಯ ನಿಮಿತ್ತವೇ,” ಎಂದು ನೀವು ನಿಮ್ಮ ಹೃದಯದಲ್ಲಿ ಹೇಳಿಕೊಳ್ಳಬಾರದು. ಆ ಜನಾಂಗಗಳ ಕೆಟ್ಟತನದ ನಿಮಿತ್ತವೇ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.</verse>
				<verse number="5">ನಿಮ್ಮ ನೀತಿಗೋಸ್ಕರವೂ, ನಿಮ್ಮ ಹೃದಯದ ಯಥಾರ್ಥತೆಗೋಸ್ಕರವೂ ನೀವು ಅವರ ದೇಶವನ್ನು ಸ್ವತಂತ್ರಿಸಿಕೊಳ್ಳುವುದಕ್ಕೆ ಬರುವುದಿಲ್ಲ. ಆ ಜನಾಂಗಗಳ ಕೆಟ್ಟತನಕ್ಕೋಸ್ಕರವೂ, ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರಡಿಸುತ್ತಾರೆ.</verse>
				<verse number="6">ಹೀಗಿರುವುದರಿಂದ ನಿಮ್ಮ ನೀತಿಗೋಸ್ಕರ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಈ ಒಳ್ಳೆಯ ದೇಶವನ್ನು ಸ್ವಾಧೀನಪಡಿಸಿಕೊಳ್ಳುವುದಕ್ಕೆ ಕೊಡುವುದಿಲ್ಲವೆಂದು ನೀವು ತಿಳಿದುಕೊಳ್ಳಬೇಕು. ಏಕೆಂದರೆ ನೀವು ಹಟಮಾರಿ ಜನಾಂಗವಾಗಿದ್ದೀರಿ.</verse>
				<verse number="7">ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ. ಮರೆಯಬೇಡಿರಿ. ನೀವು ಈಜಿಪ್ಟ್ ದೇಶದಿಂದ ಹೊರಟ ದಿವಸ ಮೊದಲ್ಗೊಂಡು ಈ ಸ್ಥಳಕ್ಕೆ ಬರುವವರೆಗೆ ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬೀಳುತ್ತಿದ್ದೀರಿ.</verse>
				<verse number="8">ನೀವು ಹೋರೇಬಿನಲ್ಲಿಯೂ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದಾಗ, ಅವರು ನಿಮ್ಮನ್ನು ನಿಮ್ಮ ಮೇಲೆ ಸಿಟ್ಟುಮಾಡಿಕೊಂಡು ನಾಶಮಾಡಬೇಕೆಂದಿದ್ದರು.</verse>
				<verse number="9">ಆ ಕಲ್ಲಿನ ಹಲಗೆಗಳು ಅಂದರೆ, ಯೆಹೋವ ದೇವರು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ, ನಲವತ್ತು ದಿವಸ ಹಗಲುರಾತ್ರಿ ಬೆಟ್ಟದಲ್ಲಿದ್ದೆನು. ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ.</verse>
				<verse number="10">ಆಗ ಯೆಹೋವ ದೇವರು ನನಗೆ ತಮ್ಮ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟರು. ಯೆಹೋವ ದೇವರು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಕೂಡಿದ ದಿನದಲ್ಲಿ ಹೇಳಿದ ಆಜ್ಞೆಗಳೆಲ್ಲಾ ಆ ಹಲಗೆಗಳಲ್ಲಿದ್ದವು.</verse>
				<verse number="11">ನಲವತ್ತು ದಿವಸ ಹಗಲು ರಾತ್ರಿಗಳಾದ ಮೇಲೆ ಯೆಹೋವ ದೇವರು ನನಗೆ ಒಡಂಬಡಿಕೆಯ ಹಲಗೆಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೊಟ್ಟರು.</verse>
				<verse number="12">ಆಗ ಯೆಹೋವ ದೇವರು, “ಎದ್ದು ಇಲ್ಲಿಂದ ಬೇಗ ಇಳಿದು ಹೋಗು. ಏಕೆಂದರೆ ನೀನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ನಿನ್ನ ಜನರು ಕೆಟ್ಟು ಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡಿದ್ದಾರೆ,” ಎಂದು ನನಗೆ ಹೇಳಿದರು.</verse>
				<verse number="13">ಇದಲ್ಲದೆ ಯೆಹೋವ ದೇವರು ನನಗೆ, “ನಾನು ಈ ಜನರನ್ನು ನೋಡಿದ್ದೇನೆ. ಇಗೋ, ಇದು ಆಜ್ಞೆಗೆ ವಿಧೇಯವಾಗದ ಜನಾಂಗವೇ.</verse>
				<verse number="14">ನನ್ನನ್ನು ಬಿಡು, ನಾನು ಅವರನ್ನು ನಾಶಮಾಡಿ, ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು, ನಿಮ್ಮನ್ನು ಅವರಿಗಿಂತ ಬಲಿಷ್ಠವಾದ ಜನಾಂಗವಾಗಿ ಮಾಡುವೆನು,” ಎಂದು ಹೇಳಿದರು.</verse>
				<verse number="15">ಆಗ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದೆನು. ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿತ್ತು. ಒಡಂಬಡಿಕೆಯ ಎರಡು ಹಲಗೆಗಳು ನನ್ನ ಎರಡು ಕೈಗಳಲ್ಲಿ ಇದ್ದವು.</verse>
				<verse number="16">ನಾನು ನೋಡಿದಾಗ, ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಎರಕ ಹೊಯ್ದ ಕರುವನ್ನು ನಿಮಗೆ ಮಾಡಿಕೊಂಡು, ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗ ಬಿಟ್ಟುಬಿಟ್ಟು ಹೋಗಿದ್ದಿರಿ.</verse>
				<verse number="17">ಆಗ ನಾನು ಆ ಎರಡು ಹಲಗೆಗಳನ್ನು ತೆಗೆದುಕೊಂಡು ನನ್ನ ಕೈಯಿಂದ ಬಿಸಾಡಿ, ನಿಮ್ಮ ಮುಂದೆ ಒಡೆದು ಹಾಕಿದೆನು.</verse>
				<verse number="18">ಆಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ಅವರಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಲವತ್ತು ದಿವಸ ಹಗಲುರಾತ್ರಿ ಊಟಮಾಡದೆ, ನೀರು ಕುಡಿಯದೆ, ಯೆಹೋವ ದೇವರ ಮುಂದೆ ಬಿದ್ದಿದ್ದೆನು.</verse>
				<verse number="19">ಏಕೆಂದರೆ ಯೆಹೋವ ದೇವರು ನಿಮ್ಮನ್ನು ನಾಶಮಾಡುವಂತೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು. ಆದರೆ ಆ ಸಾರಿ ಕೂಡ ಯೆಹೋವ ದೇವರು ನನ್ನ ಬೇಡಿಕೆಯನ್ನು ಕೇಳಿದರು.</verse>
				<verse number="20">ಆರೋನನನ್ನು ನಾಶಮಾಡುವಂತೆ ಯೆಹೋವ ದೇವರು ಅವನ ಮೇಲೆಯೂ ಬಹಳ ಕೋಪಗೊಂಡರು. ಆದ್ದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆ ಮಾಡಿದೆನು.</verse>
				<verse number="21">ಇದಲ್ಲದೆ ನೀವು ಯಾವದರ ಮೂಲಕ ಪಾಪವನ್ನು ಮಾಡಿದ್ದೀರೋ ಆ ಚಿನ್ನದ ಕರುವನ್ನು ನಾನು ತೆಗೆದುಕೊಂಡು, ಬೆಂಕಿಯಿಂದ ಸುಟ್ಟು, ಒಡೆದು, ಅರೆದು, ಧೂಳುಮಾಡಿ, ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬಿಸಾಡಿದೆನು.</verse>
				<verse number="22">ನೀವು ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಲ್ಲಿಯೂ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿದಿರಿ.</verse>
				<verse number="23">ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಕಾದೇಶ್ ಬರ್ನೇಯದಿಂದ ಕಳುಹಿಸಿ, “ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ,” ಎಂದು ಹೇಳಿದಾಗ, ನೀವು ನಿಮ್ಮ ದೇವರಾದ ಯೆಹೋವ ದೇವರ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ನಂಬಲಿಲ್ಲ. ಅವರ ಮಾತನ್ನೂ ಕೇಳಲಿಲ್ಲ.</verse>
				<verse number="24">ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದೀರಿ.</verse>
				<verse number="25">ಹೀಗಿರಲಾಗಿ ಯೆಹೋವ ದೇವರು ನಿಮ್ಮನ್ನು ನಾಶಮಾಡುತ್ತೇನೆಂದು ಹೇಳಿದ್ದರಿಂದ, ನಾನು ಮುಂಚೆ ಬಿದ್ದುಕೊಂಡ ಹಾಗೆಯೇ ನಲವತ್ತು ದಿವಸ ಹಗಲುರಾತ್ರಿ ಯೆಹೋವ ದೇವರ ಮುಂದೆ ಬಿದ್ದಿದ್ದೆನು.</verse>
				<verse number="26">ನಾನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ, “ಸಾರ್ವಭೌಮ ಯೆಹೋವ ದೇವರೇ, ನೀವು ನಿಮ್ಮ ಮಹಿಮೆಯಿಂದ ವಿಮೋಚಿಸಿ, ಬಲವಾದ ಕೈಯಿಂದ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದ ನಿಮ್ಮ ಜನರನ್ನು ನಾಶಮಾಡಬೇಡಿ.</verse>
				<verse number="27">ನಿಮ್ಮ ದಾಸರಾದ ಅಬ್ರಹಾಮ್, ಇಸಾಕ್, ಯಾಕೋಬರನ್ನು ಜ್ಞಾಪಕಮಾಡಿಕೊಳ್ಳಿರಿ. ಈ ಜನರ ಕಾಠಿಣ್ಯದ ಮೇಲೆಯೂ, ಅವರ ದುಷ್ಟತ್ವದ ಮೇಲೆಯೂ, ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡಿ.</verse>
				<verse number="28">ನೀವು ಯಾವ ದೇಶದಿಂದ ನಮ್ಮನ್ನು ಬರಮಾಡಿದಿರೋ, ಆ ದೇಶದವರು, ‘ಯೆಹೋವ ದೇವರು ಇಸ್ರಾಯೇಲರಿಗೆ ವಾಗ್ದಾನ ಮಾಡಿದ ನಾಡಿಗೆ ಅವರನ್ನು ಸೇರಿಸಲಾರದೆ ಹಗೆಮಾಡಿ, ಮರುಭೂಮಿಯಲ್ಲಿ ಕೊಲ್ಲುವುದಕ್ಕೆ ಕರೆದುಕೊಂಡು ಹೋದರು’ ಎಂದು ಹೇಳುವುದಕ್ಕೆ ಆಸ್ಪದವಾದೀತು.</verse>
				<verse number="29">ಆದರೂ ನೀವು ನಿಮ್ಮ ದೊಡ್ಡ ಶಕ್ತಿಯಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಹೊರಗೆ ಬರಮಾಡಿದ ನಿಮ್ಮ ಜನವೂ ನಿಮ್ಮ ಸೊತ್ತೂ ಇವರೇ,” ಎಂದು ಹೇಳಿದೆನು.</verse>
			</chapter>
			<chapter number="10">
				<verse number="1">ಆ ಕಾಲದಲ್ಲಿ ಯೆಹೋವ ದೇವರು ನನಗೆ, “ಮೊದಲಿನವುಗಳ ಹಾಗೆ ಎರಡು ಕಲ್ಲಿನ ಹಲಗೆಗಳನ್ನು ನೀನು ಕೆತ್ತಿಕೊಂಡು, ಬೆಟ್ಟವನ್ನೇರಿ ನನ್ನ ಬಳಿಗೆ ಬಾ. ಒಂದು ಮರದ ಮಂಜೂಷವನ್ನು ಮಾಡಿಕೊಳ್ಳಬೇಕು.</verse>
				<verse number="2">ಆಗ ನೀನು ಒಡೆದ ಆ ಮೊದಲಿನ ಹಲಗೆಗಳ ಮೇಲಿದ್ದ ಮಾತುಗಳನ್ನು ಈ ಹಲಗೆಗಳ ಮೇಲೆ ಬರೆಯುವೆನು. ಆಮೇಲೆ ನೀನು ಅವುಗಳನ್ನು ಮಂಜೂಷದಲ್ಲಿ ಇಡಬೇಕು,” ಎಂದು ಹೇಳಿದರು.</verse>
				<verse number="3">ಈ ಪ್ರಕಾರ ನಾನು ಜಾಲಿ ಮರದ ಮಂಜೂಷವನ್ನು ಮಾಡಿ, ಕಲ್ಲಿನ ಎರಡು ಹಲಗೆಗಳನ್ನು ಮುಂಚಿನವುಗಳಂತೆ ಕೆತ್ತಿ, ಆ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟವನ್ನೇರಿದೆನು.</verse>
				<verse number="4">ಆ ಹಲಗೆಗಳ ಮೇಲೆ ಯೆಹೋವ ದೇವರು ಮುಂಚೆ ಬರೆದಿದ್ದ ಪ್ರಕಾರ ಬರೆದರು. ಅವರು ನಿಮಗೆ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭೆಕೂಡಿದ ದಿವಸದಲ್ಲಿ ಹೇಳಿದ ಆ ಹತ್ತು ಆಜ್ಞೆಗಳನ್ನು ಬರೆದು ನನಗೆ ಕೊಟ್ಟರು.</verse>
				<verse number="5">ತರುವಾಯ ನಾನು ಬೆಟ್ಟದಿಂದ ಇಳಿದುಬಂದು, ಆ ಹಲಗೆಗಳನ್ನು ಯೆಹೋವ ದೇವರು ನನಗೆ ಆಜ್ಞಾಪಿಸಿದ ಹಾಗೆ ನಾನು ಮಾಡಿದ ಮಂಜೂಷದಲ್ಲಿ ಇಟ್ಟೆನು. ಅವು ಅಲ್ಲಿಯೇ ಇರುತ್ತವೆ.</verse>
				<verse number="6">ಇಸ್ರಾಯೇಲರು ಯಾಕಾನನ ಮಕ್ಕಳ ಬಾವಿಗಳ ಬಳಿಯಿಂದ ಬೇರೋತದಿಂದ ಮೋಸೇರಕ್ಕೆ ಹೊರಟಾಗ, ಆರೋನನು ಅಲ್ಲಿ ಮರಣಹೊಂದಿದನು. ಅಲ್ಲೇ ಅವನನ್ನು ಹೂಳಿಟ್ಟೆವು. ಅವನ ಮಗ ಎಲಿಯಾಜರನು ಅವನ ಬದಲಿಗೆ ಯಾಜಕನಾದನು.</verse>
				<verse number="7">ಅಲ್ಲಿಂದ ಅವರು ಗುದ್ಗೋದಕ್ಕೂ, ಗುದ್ಗೋದದಿಂದ ನೀರಿನ ಪ್ರವಾಹಗಳುಳ್ಳ ದೇಶವಾದ ಯೊಟ್ಬಾತಕ್ಕೂ ಪ್ರಯಾಣಮಾಡಿದರು.</verse>
				<verse number="8">ಆ ಕಾಲದಲ್ಲಿ ಯೆಹೋವ ದೇವರು ಲೇವಿ ಗೋತ್ರವನ್ನು ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ಯೆಹೋವ ದೇವರ ಮುಂದೆ ನಿಂತುಕೊಂಡು ಅವರಿಗೆ ಸೇವೆಮಾಡಿ, ಅವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದರು. ಅವರು ಈ ದಿನದವರೆಗೂ ಆ ಕೆಲಸವನ್ನು ನಡೆಸುತ್ತಿದ್ದಾರೆ.</verse>
				<verse number="9">ಆದ್ದರಿಂದ ಲೇವಿಯರಿಗೆ ಅವರ ಸಹೋದರರ ಸಂಗಡ ಸ್ವಂತವಾದ ಭೂಸ್ವಾಸ್ತ್ಯವು ದೊರೆಯಲಿಲ್ಲ. ನಿಮ್ಮ ಯೆಹೋವ ದೇವರು ಅವರಿಗೆ ವಾಗ್ದಾನ ಮಾಡಿದಂತೆ ಯೆಹೋವ ದೇವರೇ ಅವರ ಸೊತ್ತು.</verse>
				<verse number="10">ಇದಲ್ಲದೆ ನಾನು ಮೊದಲಿನಂತೆ ನಲವತ್ತು ದಿವಸ ಹಗಲುರಾತ್ರಿ ಬೆಟ್ಟದಲ್ಲಿ ನಿಂತೆನು. ಯೆಹೋವ ದೇವರು ಆ ಕಾಲದಲ್ಲಿ ನನ್ನ ಪ್ರಾರ್ಥನೆಯನ್ನು ಕೇಳಿ, ನಿಮ್ಮನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.</verse>
				<verse number="11">ಯೆಹೋವ ದೇವರು ನನಗೆ, “ಜನರ ಮುಂದೆ ಹೋಗು, ನಾನು ಇವರ ಪಿತೃಗಳಿಗೆ ಪ್ರಮಾಣ ಮಾಡಿಕೊಟ್ಟ ದೇಶವನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ,” ಎಂದು ಆಜ್ಞಾಪಿಸಿದರು.</verse>
				<verse number="12">ಈಗ ಇಸ್ರಾಯೇಲರೇ, ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದುಕೊಂಡು, ಅವರನ್ನು ಪ್ರೀತಿಸಿ, ನಿಮ್ಮ ದೇವರಾದ ಯೆಹೋವ ದೇವರಿಗೆ ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ.</verse>
				<verse number="13">ನಾನು ಈ ಹೊತ್ತು ನಿಮ್ಮ ಮೇಲಿಗಾಗಿ ನಿಮಗೆ ಆಜ್ಞಾಪಿಸುವ ಯೆಹೋವ ದೇವರ ಆಜ್ಞೆಗಳನ್ನೂ ಅವರ ನಿಮಯಗಳನ್ನೂ ಕಾಪಾಡುವುದೇ ಹೊರತು, ಮತ್ತೇನೂ ನಮ್ಮ ದೇವರಾಗಿರುವ ಯೆಹೋವ ದೇವರು ನಿಮ್ಮಿಂದ ಕೇಳುತ್ತಾರೆ?</verse>
				<verse number="14">ಆಕಾಶವೂ ಉನ್ನತಾಕಾಶವೂ ಭೂಮಿಯೂ ಅದರಲ್ಲಿರುವಂಥಾದ್ದೆಲ್ಲವೂ ನಿಮ್ಮ ದೇವರಾಗಿರುವ ಯೆಹೋವ ದೇವರವುಗಳೇ.</verse>
				<verse number="15">ನಿಮ್ಮ ಪಿತೃಗಳ ಮೇಲೆ ಯೆಹೋವ ದೇವರು ತಾವೇ ಮನಸ್ಸಿಟ್ಟು, ಅವರನ್ನು ಪ್ರೀತಿಸಿ, ಅವರ ಸಂತಾನವಾಗಿರುವ ನಿಮ್ಮನ್ನು ಈ ಹೊತ್ತು ಇರುವ ಪ್ರಕಾರ ಎಲ್ಲಾ ಜನರೊಳಗಿಂದ ಆರಿಸಿಕೊಂಡರು.</verse>
				<verse number="16">ಹೀಗಿರುವುದರಿಂದ ನಿಮ್ಮ ಹೃದಯದ ಸುನ್ನತಿ ಮಾಡಿಕೊಳ್ಳಿರಿ. ಇನ್ನು ಮೇಲೆ ಹಟಮಾರಿಗಳಾಗಿರಬೇಡಿರಿ.</verse>
				<verse number="17">ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ದೇವರುಗಳ ದೇವರು, ಕರ್ತರ ಕರ್ತರು, ದೇವಾಧಿದೇವರು, ಪರಾಕ್ರಮಿಯೂ, ಭಯಭಕ್ತಿಗೆ ಪಾತ್ರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವುದಿಲ್ಲ. ಲಂಚ ತೆಗೆದುಕೊಳ್ಳುವುದಿಲ್ಲ.</verse>
				<verse number="18">ಅವರು ತಂದೆ ಇಲ್ಲದವರಿಗೂ, ವಿಧವೆಯರಿಗೂ ನ್ಯಾಯ ದೊರಕಿಸುತ್ತಾರೆ. ಪರದೇಶಿಯರನ್ನು ಪ್ರೀತಿಸಿ ಅನ್ನ, ವಸ್ತ್ರ ಕೊಡುತ್ತಾರೆ.</verse>
				<verse number="19">ಹೀಗಿರುವುದರಿಂದ ನೀವು ಪರದೇಶಿಯರನ್ನು ಪ್ರೀತಿಸಿರಿ. ಏಕೆಂದರೆ ನೀವು ಈಜಿಪ್ಟಿನಲ್ಲಿ ಪರದೇಶಿಗಳಾಗಿದ್ದೀರಿ.</verse>
				<verse number="20">ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡಬೇಕು. ಅವರ ಸೇವೆಮಾಡಿ ಅವರಿಗೆ ಅಂಟಿಕೊಂಡು, ಅವರ ಹೆಸರಿನಲ್ಲಿ ಪ್ರಮಾಣಮಾಡಬೇಕು.</verse>
				<verse number="21">ನೀವು ನೋಡಿದ ಆ ಮಹಾ ಭಯಂಕರವಾದ ಕಾರ್ಯಗಳನ್ನು ನಿಮಗೆ ಮಾಡಿದ ಅವರೇ ನಿಮ್ಮ ಸ್ತೋತ್ರವು. ಅವರೇ ನಿಮ್ಮ ದೇವರು.</verse>
				<verse number="22">ಎಪ್ಪತ್ತು ಮಂದಿಯಾಗಿ ನಿಮ್ಮ ಪಿತೃಗಳು ಈಜಿಪ್ಟಿಗೆ ಇಳಿದು ಹೋದರು. ಈಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡಿದ್ದಾರೆ.</verse>
			</chapter>
			<chapter number="11">
				<verse number="1">ಹೀಗಿರುವುದರಿಂದ ನಿಮ್ಮ ಯೆಹೋವ ದೇವರನ್ನು ಪ್ರೀತಿಸಿ, ಅವರ ಅಪೇಕ್ಷೆ, ಅವರ ತೀರ್ಪು, ಅವರ ನಿಯಮ ಹಾಗು ಅವರ ಆಜ್ಞೆಗಳನ್ನು ಯಾವಾಗಲೂ ಕೈಗೊಳ್ಳಬೇಕು.</verse>
				<verse number="2">ನಿಮಗೆ ಈ ಹೊತ್ತು ತಿಳಿಯಬೇಕಾದದ್ದೇನೆಂದರೆ, ನಿಮ್ಮ ದೇವರಾದ ಯೆಹೋವ ದೇವರ ಶಿಕ್ಷಣವನ್ನು ಅನುಭವಿಸಿದ್ದು ನಿಮ್ಮ ಮಕ್ಕಳಲ್ಲ: ದೇವರ ಮಹತ್ವವನ್ನೂ, ಅವರ ಬಲವಾದ ಕೈಯನ್ನೂ, ಅವರು ಚಾಚಿದ ಭುಜವನ್ನೂ;</verse>
				<verse number="3">ಅಂದರೆ, ದೇವರು ಈಜಿಪ್ಟ್ ಮಧ್ಯದಲ್ಲಿ ಈಜಿಪ್ಟಿನ ಅರಸನಾದ ಫರೋಹನಿಗೆ ಮತ್ತು ಅವನ ಎಲ್ಲಾ ದೇಶಕ್ಕೆ ಮಾಡಿದ ಅವರ ಸೂಚಕಕಾರ್ಯಗಳನ್ನೂ ನೀವೇ ಅನುಭವಿಸಿ ನೋಡಿದ್ದೀರಿ;</verse>
				<verse number="4">ದೇವರು ಈಜಿಪ್ಟಿನ ಸೈನ್ಯಕ್ಕೆ, ಅವರ ಕುದುರೆಗಳಿಗೆ ಮತ್ತು ರಥಗಳಿಗೆ ಮಾಡಿದ್ದನ್ನು ಅಂದರೆ, ಅವರು ನಿಮ್ಮನ್ನು ಹಿಂದಟ್ಟುವಾಗ ಕೆಂಪುಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ, ಸಂಪೂರ್ಣವಾಗಿ ಅವರನ್ನು ನಾಶಮಾಡಿದ್ದನ್ನು ಸಹ ನೀವು ನೋಡಿದ್ದೀರಿ;</verse>
				<verse number="5">ನೀವು ಈ ಸ್ಥಳಕ್ಕೆ ಸೇರುವ ತನಕ ಯೆಹೋವ ದೇವರು ಮರುಭೂಮಿಯಲ್ಲಿ ನಿಮಗೆ ಮಾಡಿದ ಉಪಕಾರಗಳನ್ನೂ;</verse>
				<verse number="6">ರೂಬೇನನ ಮಗ ಎಲೀಯಾಬನ ಪುತ್ರರಾಗಿರುವ ದಾತಾನ್, ಅಬೀರಾಮರು ದಂಗೆಯೆದ್ದಾಗ, ಭೂಮಿಯು ಬಾಯಿತೆರೆದು ಅವರ ಮನೆಗಳನ್ನೂ, ಅವರಿಗಿದ್ದ ಎಲ್ಲಾ ಆಸ್ತಿಯನ್ನೂ, ಮನೆಯವರನ್ನೂ ಡೇರೆಗಳನ್ನೂ ಅವರಿಗೆ ಸೇರಿದ ಎಲ್ಲಾ ಪಶುಪ್ರಾಣಿಗಳನ್ನೂ, ಸಮಸ್ತ ಇಸ್ರಾಯೇಲರ ಮಧ್ಯದಲ್ಲಿ ಹೇಗೆ ನುಂಗುವಂತೆ ದೇವರು ಮಾಡಿದರೆಂಬುದನ್ನೂ ಜ್ಞಾಪಕಮಾಡಿಕೊಳ್ಳಿರಿ.</verse>
				<verse number="7">ಯೆಹೋವ ದೇವರು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ನಿಮ್ಮ ಕಣ್ಣುಗಳು ನೋಡಿದವು.</verse>
				<verse number="8">ಹೀಗಿರುವುದರಿಂದ ಈಗ ನಾನು ನಿಮಗೆ ಬೋಧಿಸುವ ಈ ಆಜ್ಞೆಯನ್ನೆಲ್ಲಾ ಕೈಗೊಳ್ಳಬೇಕು. ಆಗ ನೀವು ಬಲವುಳ್ಳವರಾಗಿ, ಈ ನದಿದಾಟಿ ಆಚೆಯಿರುವ ದೇಶವನ್ನು ಪ್ರವೇಶಿಸಿ, ಅದನ್ನು ಸ್ವಾಧೀನಮಾಡಿಕೊಳ್ಳುವಿರಿ.</verse>
				<verse number="9">ಯೆಹೋವ ದೇವರು ನಿಮ್ಮ ಪಿತೃಗಳಿಗೂ, ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಾಗಿರುವ ಆ ಹಾಲೂ ಜೇನೂ ಹರಿಯುವ ದೇಶದಲ್ಲಿ ನೀವು ಬಹುಕಾಲ ಬಾಳುವಿರಿ.</verse>
				<verse number="10">ಏಕೆಂದರೆ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶವು, ನೀವು ಹೊರಟ ಈಜಿಪ್ಟ್ ದೇಶದ ಹಾಗಲ್ಲ. ಅಲ್ಲಿ ನೀವು ಬೀಜವನ್ನು ಬಿತ್ತಿ, ಪಲ್ಯಗಳ ತೋಟವನ್ನು ಸಾಗುವಳಿ ಮಾಡುವ ರೀತಿಯಲ್ಲಿ ಏತವನ್ನು ತುಳಿದು, ನೀರು ಕಟ್ಟುತ್ತಿದ್ದಿರಿ.</verse>
				<verse number="11">ಆದರೆ ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶವು ಬೆಟ್ಟಗಳೂ, ತಗ್ಗುಗಳೂ ಉಳ್ಳ ದೇಶವೇ; ಆಕಾಶದ ಮಳೆಯಿಂದ ಅದಕ್ಕೆ ನೀರು ದೊರೆಯುವುದು.</verse>
				<verse number="12">ಅದು ನಿಮ್ಮ ದೇವರಾದ ಯೆಹೋವ ದೇವರು ಪರಾಮರಿಸುವ ದೇಶವೇ; ವರ್ಷದ ಆರಂಭದಿಂದ ವರ್ಷದ ಅಂತ್ಯದವರೆಗೂ ಯಾವಾಗಲೂ ನಿಮ್ಮ ದೇವರಾದ ಯೆಹೋವ ದೇವರ ಕಣ್ಣು ಅದರ ಮೇಲಿರುವುದು.</verse>
				<verse number="13">ಹಾಗಾದರೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಯಕೊಟ್ಟು ಕೇಳಿ, ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ ಅವರಿಗೆ ಸೇವೆ ಮಾಡಿದರೆ,</verse>
				<verse number="14">ನೀವು ನಿಮ್ಮ ಧಾನ್ಯವನ್ನೂ, ಹೊಸ ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಕೂಡಿಸುವಂತೆ ದೇವರು ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ, ಮುಂಗಾರು ಹಿಂಗಾರುಗಳನ್ನೂ ಕೊಡುವರು.</verse>
				<verse number="15">ನಿಮ್ಮ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ನಿಮ್ಮ ಹೊಲದಲ್ಲಿ ಕೊಡುವರು. ನೀವು ಆಹಾರದಿಂದ ತೃಪ್ತರಾಗುವಿರಿ.</verse>
				<verse number="16">ನಿಮ್ಮ ಹೃದಯವು ಮರಳುಗೊಂಡು ನೀವು ದಾರಿತಪ್ಪಿ ಬೇರೆ ದೇವರುಗಳನ್ನು ಆರಾಧಿಸಿ ಅಡ್ಡಬೀಳದಂತೆ ಎಚ್ಚರವಾಗಿರಿ.</verse>
				<verse number="17">ಇಲ್ಲದಿದ್ದರೆ, ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯಲು ಅವರು ಮಳೆಯಾಗದಂತೆ ಮಾಡುವರು. ಭೂಮಿಯು ತನ್ನ ಬೆಳೆಯನ್ನು ಕೊಡದಂತೆ ಆಕಾಶವನ್ನು ಮುಚ್ಚಿಬಿಡುವರು. ಯೆಹೋವ ದೇವರು ನಿಮಗೆ ಕೊಡುವ ಆ ಒಳ್ಳೆಯ ದೇಶದಲ್ಲಿ ನೀವು ಬೇಗ ನಾಶವಾಗಿಹೋಗುವಿರಿ, ಎಚ್ಚರಿಕೆ.</verse>
				<verse number="18">ಈ ನನ್ನ ವಾಕ್ಯಗಳನ್ನು ನಿಮ್ಮ ಹೃದಯದಲ್ಲಿಯೂ, ಪ್ರಾಣಗಳಲ್ಲಿಯೂ ಇಟ್ಟುಕೊಳ್ಳಿರಿ. ಅವುಗಳನ್ನು ಗುರುತಾಗಿ ನಿಮ್ಮ ಕೈಗಳಿಗೆ ಕಟ್ಟಿಕೊಳ್ಳಿರಿ, ಅವು ನಿಮ್ಮ ಹಣೆಗೆ ಕಟ್ಟಿರಲಿ.</verse>
				<verse number="19">ನೀವು ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ, ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.</verse>
				<verse number="20">ಅವುಗಳನ್ನು ನಿಮ್ಮ ಮನೆಯ ನಿಲುವು ಪಟ್ಟಿಗಳ ಮೇಲೆಯೂ ನಿಮ್ಮ ಬಾಗಿಲುಗಳ ಮೇಲೆಯೂ ಬರೆಯಬೇಕು.</verse>
				<verse number="21">ಹೀಗೆ ಮಾಡಿದರೆ ನಿಮ್ಮ ದಿನಗಳೂ, ನಿಮ್ಮ ಮಕ್ಕಳ ದಿನಗಳೂ ಭೂಮಿಯಲ್ಲಿ ಆಕಾಶದ ದಿನಗಳು ನೆಲೆಯಾಗಿರುವ ಪ್ರಕಾರ, ಯೆಹೋವ ದೇವರು ನಿಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ನೆಲೆಯಾಗಿರುವಿರಿ.</verse>
				<verse number="22">ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀವು ಎಚ್ಚರಿಕೆಯಿಂದ ಕಾಪಾಡಿ, ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದು, ಅವರನ್ನು ಅಂಟಿಕೊಂಡರೆ,</verse>
				<verse number="23">ಯೆಹೋವ ದೇವರು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವರು. ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನಮಾಡಿಕೊಳ್ಳುವಿರಿ.</verse>
				<verse number="24">ನೀವು ಹೆಜ್ಜೆ ಇಡುವ ಸ್ಥಳವೆಲ್ಲಾ ನಿಮ್ಮದಾಗುವುದು. ಮರುಭೂಮಿಯಿಂದ ಲೆಬನೋನಿನವರೆಗೂ, ಯೂಫ್ರೇಟೀಸ್ ನದಿಯಿಂದ ಪಶ್ಚಿಮ ಸಮುದ್ರದ ಅಂತ್ಯದವರೆಗೂ ನಿಮ್ಮ ಮೇರೆಯಾಗಿರುವುದು.</verse>
				<verse number="25">ಯಾರೂ ನಿಮ್ಮ ಮುಂದೆ ನಿಲ್ಲಲಾರರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ, ದಿಗಿಲನ್ನೂ, ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವರು.</verse>
				<verse number="26">ನಾನು ಈ ಹೊತ್ತು ಆಶೀರ್ವಾದವನ್ನೂ, ಶಾಪವನ್ನೂ ನಿಮ್ಮ ಮುಂದೆ ಇಡುತ್ತೇನೆ.</verse>
				<verse number="27">ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ನೀವು ವಿಧೇಯರಾದರೆ, ಆಶೀರ್ವಾದವನ್ನು ಪಡೆದುಕೊಳ್ಳುವಿರಿ.</verse>
				<verse number="28">ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಮಾರ್ಗಕ್ಕೆ ಓರೆಯಾದರೆ, ನೀವು ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿದರೆ, ನಿಮಗೆ ಶಾಪವು ತಗಲುವುದು.</verse>
				<verse number="29">ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರವೇಶಿಸುವ ದೇಶದಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಸೇರಿಸಿದಾಗ, ನೀವು ಗೆರಿಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.</verse>
				<verse number="30">ಇವು ಯೊರ್ದನ್ ನದಿಯ ಆಚೆ ಸೂರ್ಯನು ಅಸ್ತಮಿಸುವ ದಿಕ್ಕಿನಲ್ಲಿ ಅರಾಬಾ ಪ್ರದೇಶದಲ್ಲಿ ಗಿಲ್ಗಾಲಿಗೆ ಎದುರಾಗಿರುವ ಬಯಲಿನೊಳಗೆ ಮೋರೆ ಎಂಬ ಮಹಾವೃಕ್ಷದ ಸಮೀಪ ವಾಸಮಾಡುವ ಕಾನಾನ್ಯರ ದೇಶದಲ್ಲಿ ಇರುತ್ತವೆ.</verse>
				<verse number="31">ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಯೊರ್ದನ್ ನದಿಯನ್ನು ದಾಟಿ ಹೋಗಬೇಕು. ಆಗ ಅದನ್ನು ನೀವು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಮಾಡುವಾಗ,</verse>
				<verse number="32">ನಾನು ಈ ಹೊತ್ತು ನಿಮ್ಮ ಮುಂದೆ ಇಡುವ ಎಲ್ಲಾ ಆಜ್ಞಾವಿಧಿಗಳನ್ನು ಕಾಪಾಡಿ ನಡೆದುಕೊಳ್ಳಬೇಕು.</verse>
			</chapter>
			<chapter number="12">
				<verse number="1">ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಕೊಡುವ ದೇಶದಲ್ಲಿ ನೀವು ಬದುಕುವ ದಿವಸಗಳಲ್ಲೆಲ್ಲಾ ಕೈಗೊಂಡು ನಡೆಯತಕ್ಕ ತೀರ್ಪು ಹಾಗು ನಿಯಮಗಳು ಇವೇ.</verse>
				<verse number="2">ನೀವು ಸ್ವಾಧೀನ ಮಾಡಿಕೊಳ್ಳುವ ದೇಶದ ಜನಾಂಗಗಳು ತಮ್ಮ ದೇವರುಗಳಿಗೆ ಪೂಜಿಸಿದ ಸ್ಥಳಗಳನ್ನೂ, ಬೆಟ್ಟಗಳ ಮೇಲಿನ ಎತ್ತರ ಸ್ಥಳಗಳನ್ನೂ, ಗುಡ್ಡಗಳ ಹಾಗು ಮರಗಳ ಕೆಳಗಿರುವ ಸ್ಥಳಗಳನ್ನು ನೀವು ಪೂರ್ಣವಾಗಿ ನಾಶಮಾಡಬೇಕು.</verse>
				<verse number="3">ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ, ಅವರ ಕಲ್ಲುಸ್ತಂಭಗಳನ್ನು ಒಡೆದು, ಅವರ ಆಶೇರ್ ಸ್ತಂಭಗಳನ್ನು ಬೆಂಕಿಯಿಂದ ಸುಟ್ಟು, ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ, ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ತೆಗೆದುಹಾಕಬೇಕು.</verse>
				<verse number="4">ಅವರು ಅನುಸರಿಸುವ ರೀತಿಯಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಆರಾಧಿಸಬಾರದು.</verse>
				<verse number="5">ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಗೋತ್ರಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ದೇವರ ದರ್ಶನಕ್ಕಾಗಿ ಸಭೆ ಸೇರಬೇಕು.</verse>
				<verse number="6">ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ, ನಿಮ್ಮ ಅರ್ಪಣೆಗಳನ್ನೂ, ನಿಮ್ಮ ಬೆಳೆಯನ್ನೂ, ದಶಮಾಂಶಗಳನ್ನೂ, ನಿಮ್ಮ ಹರಕೆಗಳನ್ನೂ, ಉಚಿತವಾದ ಕಾಣಿಕೆಗಳನ್ನೂ, ನಿಮ್ಮ ಚೊಚ್ಚಲಾದ ದನಕುರಿಗಳನ್ನೂ ತರಬೇಕು.</verse>
				<verse number="7">ಅಲ್ಲಿ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಉಂಡು, ನಿಮ್ಮ ಕುಟುಂಬಗಳ ಸಂಗಡ ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಿದ್ದರಿಂದ, ನೀವು ಸಾಧಿಸಿದ ಎಲ್ಲಾ ಕಾರ್ಯಗಳ ಬಗ್ಗೆ ಸಂತೋಷ ಪಡಬೇಕು.</verse>
				<verse number="8">ಈಗ ಇಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ದೃಷ್ಟಿಯಲ್ಲಿ ತೋರುವ ಪ್ರಕಾರ ಮಾಡಬೇಡಿರಿ.</verse>
				<verse number="9">ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ವಿಶ್ರಾಂತಿಗೂ, ಸೊತ್ತಿಗೂ ನೀವು ಇನ್ನೂ ಸೇರಲಿಲ್ಲ.</verse>
				<verse number="10">ಆದರೆ ನೀವು ಯೊರ್ದನ್ ನದಿಯನ್ನು ದಾಟಿದ ಮೇಲೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ, ದೇವರು ಸುತ್ತಲಿರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ, ನೀವು ಸುರಕ್ಷಿತವಾಗಿ ವಾಸಿಸುವಂತೆ ಮಾಡುವರು.</verse>
				<verse number="11">ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿಗಳನ್ನು, ಅರ್ಪಣೆಗಳನ್ನು, ಬೆಳೆಯ ದಶಮಾಂಶಗಳನ್ನು, ಯೆಹೋವ ದೇವರಿಗಾಗಿ ವಿಶೇಷ ಉಡುಗೊರೆಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.</verse>
				<verse number="12">ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸದಾಸಿಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ, ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.</verse>
				<verse number="13">ನೀವು ಕಂಡ ಎಲ್ಲಾ ಸ್ಥಳಗಳಲ್ಲಿ ನಿಮ್ಮ ದಹನಬಲಿಗಳನ್ನು ಅರ್ಪಿಸದಂತೆ ನೋಡಿಕೊಳ್ಳಿರಿ.</verse>
				<verse number="14">ಯೆಹೋವ ದೇವರು ನಿಮ್ಮ ಗೋತ್ರಗಳ ಒಂದರಲ್ಲಿ ಆಯ್ದುಕೊಳ್ಳುವ ಸ್ಥಳದಲ್ಲೇ ನೀವು ನಿಮ್ಮ ದಹನಬಲಿಗಳನ್ನು ಅರ್ಪಿಸಬೇಕು. ಅಲ್ಲೇ ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಮಾಡಬೇಕು.</verse>
				<verse number="15">ಆದರೂ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಆಶೀರ್ವಾದದ ಪ್ರಕಾರ ನಿಮ್ಮ ಇಷ್ಟಾನುಸಾರ ಮಾಂಸಾಹಾರವನ್ನು ನಿಮ್ಮ ಎಲ್ಲಾ ಊರುಗಳಲ್ಲಿ ತಿನ್ನಬಹುದು. ಆಚಾರದ ಪ್ರಕಾರ ಶುದ್ಧರೂ, ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನು ತಿನ್ನಬಹುದು.</verse>
				<verse number="16">ರಕ್ತವನ್ನು ಮಾತ್ರ ಭುಜಿಸಬೇಡಿರಿ. ಅದನ್ನು ನೀರಿನಂತೆ ನೆಲಕ್ಕೆ ಚೆಲ್ಲಬೇಕು.</verse>
				<verse number="17">ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಎಣ್ಣೆಗಳ ದಶಮಾಂಶವನ್ನೂ, ನಿಮ್ಮ ದನಕುರಿಗಳ ಚೊಚ್ಚಲಾದವುಗಳನ್ನೂ, ನೀವು ಮಾಡುವ ಎಲ್ಲಾ ಹರಕೆಯ ಪದಾರ್ಥಗಳನ್ನೂ, ನಿಮ್ಮ ಉಚಿತವಾದ ಕಾಣಿಕೆಗಳನ್ನೂ, ಯಾಜಕರಿಗೆ ಪ್ರತ್ಯೇಕಿಸಿದ ಅರ್ಪಣೆಗಳನ್ನೂ ನಿಮ್ಮ ಊರುಗಳಲ್ಲಿ ತಿನ್ನಬೇಡಿರಿ.</verse>
				<verse number="18">ಅವುಗಳನ್ನು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ನೀವೂ, ನಿಮ್ಮ ಮಕ್ಕಳೂ, ನಿಮ್ಮ ದಾಸರೂ, ನಿಮ್ಮ ದಾಸಿಯರೂ, ನಿಮ್ಮ ಊರುಗಳಲ್ಲಿರುವ ಲೇವಿಯರೂ ತಿನ್ನಬೇಕು. ಹೀಗೆ ನಿಮ್ಮ ಎಲ್ಲಾ ಕೈಕೆಲಸದಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನೀವು ಸಂತೋಷ ಪಡಬೇಕು.</verse>
				<verse number="19">ನೀವು ಭೂಮಿಯ ಮೇಲೆ ಜೀವಿಸುವವರೆಗೆ ಲೇವಿಯರನ್ನು ಬಿಟ್ಟು ಬಿಡದ ಹಾಗೆ ನೋಡಿಕೊಳ್ಳಿರಿ.</verse>
				<verse number="20">ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಹಾಗೆ ನಿಮ್ಮ ಮೇರೆಯನ್ನು ವಿಸ್ತಾರಮಾಡುವರು. ಆಗ ನೀವು, “ಮಾಂಸಾಹಾರವನ್ನು ತಿನ್ನಲು ಇಷ್ಟಪಡುತ್ತೇನೆ,” ಎಂದು ಹೇಳಿದರೆ, ತಿನ್ನಬಹುದು.</verse>
				<verse number="21">ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಂಡ ಸ್ಥಳವು ನಿಮಗೆ ದೂರವಾದರೆ, ಯೆಹೋವ ದೇವರು ನಿಮಗೆ ಕೊಟ್ಟ ದನಕುರಿಗಳಿಂದ ನಾನು ನಿಮಗೆ ಆಜ್ಞಾಪಿಸಿದಂತೆ ನಿಮ್ಮ ಊರಲ್ಲೇ ನಿಮಗೆ ಮನಸ್ಸಿದ್ದಷ್ಟು ಮಾಂಸಾಹಾರವನ್ನು ಮಾಡಿ ಉಣ್ಣಬಹುದು.</verse>
				<verse number="22">ಆಚಾರದ ಪ್ರಕಾರ ಶುದ್ಧರೂ, ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನು ತಿನ್ನಬಹುದು.</verse>
				<verse number="23">ರಕ್ತವನ್ನು ಮಾತ್ರ ಭುಜಿಸದ ಹಾಗೆ ಜಾಗ್ರತೆಯಾಗಿರಿ. ಏಕೆಂದರೆ ರಕ್ತವು ಪ್ರಾಣವೇ. ಮಾಂಸದೊಡನೆ ಅದರ ಜೀವವನ್ನು ತಿನ್ನಬಾರದು.</verse>
				<verse number="24">ಅದನ್ನು ಭುಜಿಸದೆ ನೀರಿನಂತೆ ಭೂಮಿಯ ಮೇಲೆ ಹೊಯ್ಯಬೇಕು.</verse>
				<verse number="25">ನೀವು ರಕ್ತವನ್ನು ಭುಜಿಸದಿದ್ದರೆ, ಯೆಹೋವ ದೇವರಿಗೆ ಮೆಚ್ಚುಗೆಯಾಗುವುದು. ಅಲ್ಲದೆ ನಿಮಗೂ, ನಿಮ್ಮ ಮಕ್ಕಳಿಗೂ ಒಳ್ಳೆಯದಾಗುವುದು.</verse>
				<verse number="26">ನಿಮಗಿರುವ ಪರಿಶುದ್ಧವಾದವುಗಳನ್ನೂ ಹರಕೆಮಾಡಿದ್ದನ್ನೂ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಬರಬೇಕು.</verse>
				<verse number="27">ಆಗ ನಿಮ್ಮ ದಹನಬಲಿಗಳನ್ನೂ, ರಕ್ತಮಾಂಸವನ್ನೂ, ನಿಮ್ಮ ದೇವರಾದ ಯೆಹೋವ ದೇವರ ಬಲಿಪೀಠದ ಮೇಲೆ ಅರ್ಪಿಸಬೇಕು. ನಿಮ್ಮ ಬಲಿಗಳ ರಕ್ತವನ್ನು ನಿನ್ನ ದೇವರಾದ ಯೆಹೋವ ದೇವರ ಬಲಿಪೀಠದ ಮೇಲೆ ಸುರಿಯಬೇಕು. ಅನಂತರ ಮಾಂಸ ಊಟಮಾಡಬಹುದು.</verse>
				<verse number="28">ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಒಳ್ಳೆಯದನ್ನೂ, ಸರಿಯಾದದ್ದನ್ನೂ ಮಾಡುವುದರಿಂದ ನಿಮಗೂ ನಿಮ್ಮ ಮುಂದೆ ಇರುವ ನಿಮ್ಮ ಮಕ್ಕಳಿಗೂ ಎಂದೆಂದಿಗೂ ಒಳ್ಳೆಯದಾಗುವ ಹಾಗೆ ನಾನು ನಿಮಗೆ ಆಜ್ಞಾಪಿಸುವ ಈ ಮಾತುಗಳನ್ನೆಲ್ಲಾ ಕೇಳಿ ಕಾಪಾಡಿರಿ.</verse>
				<verse number="29">ನೀವು ಮುತ್ತಿಗೆ ಹಾಕಿ ವಶಪಡಿಸಿಕೊಳ್ಳಲಿಕ್ಕಿರುವ ದೇಶದ ಜನಾಂಗಗಳನ್ನು ನಿಮ್ಮ ದೇವರಾದ ಯೆಹೋವ ದೇವರು ತೆಗೆದುಹಾಕುವರು. ನೀವು ಅವರನ್ನು ಹೊರಗೆ ಓಡಿಸಿ, ಅಲ್ಲಿ ನೀವು ನೆಲೆಸಿದಾಗ,</verse>
				<verse number="30">ನೀವು ಭ್ರಮೆಗೊಂಡು ನಿಮ್ಮ ಮುಂದೆ ನಾಶವಾದವರ ಬಗ್ಗೆ ವಿಚಾರಣೆ ಮಾಡಬೇಡಿರಿ. “ಈ ಜನಾಂಗಗಳು ತಮ್ಮ ದೇವರುಗಳನ್ನು ಹೇಗೆ ಪೂಜಿಸಿದವು? ನಾವೂ ಹಾಗೆ ಮಾಡೋಣ,” ಎಂದು ಹೇಳಬೇಡಿರಿ.</verse>
				<verse number="31">ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಯೆಹೋವ ದೇವರಿಗೆ ಅಸಹ್ಯವಾದ ಅನೇಕ ಸಂಗತಿಗಳನ್ನು ಮಾಡುತ್ತಾರೆ. ಅಂದರೆ, ಅವರು ತಮ್ಮ ಗಂಡು ಮಕ್ಕಳನ್ನು, ಹೆಣ್ಣು ಮಕ್ಕಳನ್ನು ತಮ್ಮ ದೇವರುಗಳಿಗೆ ಬಲಿಯಾಗಿ ಬೆಂಕಿಯಲ್ಲಿ ಸುಡುತ್ತಾರೆ. ಆದ್ದರಿಂದ ನೀವು ನಿಮ್ಮ ಯೆಹೋವ ದೇವರನ್ನು ಆ ರೀತಿಯಲ್ಲಿ ಆರಾಧಿಸಬಾರದು.</verse>
				<verse number="32">ನಾನು ನಿಮಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಕಾಪಾಡಿ ಕೈಗೊಳ್ಳಬೇಕು. ಅದಕ್ಕೆ ಏನೂ ಕೂಡಿಸಬಾರದು. ಅದರಿಂದ ಏನನ್ನೂ ತೆಗೆದುಹಾಕಬಾರದು.</verse>
			</chapter>
			<chapter number="13">
				<verse number="1">ನಿಮ್ಮ ಮಧ್ಯೆ ಯಾವ ಪ್ರವಾದಿಯೇ ಆಗಲಿ, ಕನಸುಗಾರನೇ ಆಗಲಿ, ಎದ್ದು ಬಂದು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚನೆ ಮಾಡಿ,</verse>
				<verse number="2">“ಈ ದೇವತೆಗಳನ್ನು ಅವಲಂಬಿಸಿ ಪೂಜಿಸೋಣ,” ಎಂದು ಬೋಧಿಸಬಹುದು. ಆ ಬೋಧನೆಯನ್ನು ರುಜುವಾತುಪಡಿಸಲು ಒಂದು ಅದ್ಭುತವನ್ನಾಗಲಿ, ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಸಹ ಹೇಳಬಹುದು.</verse>
				<verse number="3">ಅವನು ಹೇಳಿದಂತೆಯೇ ಅದು ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ನೀವು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸುತ್ತೀರೋ ಇಲ್ಲವೋ ಎಂಬುದನ್ನು ಕಂಡುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ.</verse>
				<verse number="4">ನಿಮ್ಮ ದೇವರಾದ ಯೆಹೋವ ದೇವರನ್ನೇ ಅನುಸರಿಸಿ, ಅವರಿಗೆ ಭಯಪಟ್ಟು, ಅವರ ಆಜ್ಞೆಗಳನ್ನು ಕಾಪಾಡಿ, ಅವರ ಮಾತನ್ನು ಕೇಳಿ, ಅವರ ಸೇವೆಮಾಡುತ್ತಾ ಅವರನ್ನೇ ಅಂಟಿಕೊಳ್ಳಬೇಕು.</verse>
				<verse number="5">ಆ ಪ್ರವಾದಿಯನ್ನು, ಕನಸು ಕಾಣುವವನಿಗೆ ಮರಣದಂಡನೆ ವಿಧಿಸಬೇಕು. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿ, ದಾಸತ್ವದಿಂದ ನಿಮ್ಮನ್ನು ವಿಮೋಚಿಸಿದ ನಿಮ್ಮ ದೇವರಾದ ಯೆಹೋವ ದೇವರಿಂದ ತಿರುಗುವಂತೆ ಮತ್ತು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಡೆಯಲು ಆಜ್ಞಾಪಿಸಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸುವಂತೆ ಅವನು ಮಾತನಾಡಿದ್ದಾನೆ. ಹೀಗೆ ನೀವು ಕೆಟ್ಟದ್ದನ್ನು ನಿಮ್ಮಿಂದ ತೆಗೆದುಹಾಕಬೇಕು.</verse>
				<verse number="6">ನಿನ್ನ ಸಹೋದರನಾಗಲಿ, ಮಗನಾಗಲಿ, ಮಗಳಾಗಲಿ, ಪ್ರೀತಿಯ ಹೆಂಡತಿಯಾಗಲಿ, ಪ್ರಾಣ ಸ್ನೇಹಿತನಾಗಲಿ, “ನೀವೂ, ನಿಮ್ಮ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು</verse>
				<verse number="7">ನಿಮಗೆ ಸಮೀಪವಾಗಲಿ, ನಿಮಗೆ ದೂರವಾಗಲಿ ಭೂಮಿಯ ಒಂದು ಕಡೆಯಿಂದ ಅದರ ಮತ್ತೊಂದು ಕಡೆಯವರೆಗೆ ನಿಮ್ಮ ಸುತ್ತಲಿರುವ ಜನರ ದೇವರುಗಳನ್ನು ಸೇವಿಸೋಣ,” ಎಂದು ನಿಮ್ಮನ್ನು ಅಂತರಂಗದಲ್ಲಿ ಪ್ರೇರೇಪಿಸಿದರೆ,</verse>
				<verse number="8">ನೀವು ಅವರಿಗೆ ಸಮ್ಮತಿಸಬಾರದು. ಅವರ ಮಾತನ್ನು ಕೇಳಬಾರದು. ನೀವು ಅವರನ್ನು ಕನಿಕರಿಸಬಾರದು ಇಲ್ಲವೆ ಬಚ್ಚಿಡಬಾರದು.</verse>
				<verse number="9">ಆ ಶಿಕ್ಷೆಯನ್ನು ನಡೆಸುವಾಗ ತಪ್ಪು ಕಂಡವನೇ ಮೊದಲು ಕಲ್ಲು ಎಸೆಯಬೇಕು, ತರುವಾಯ ಜನರೆಲ್ಲರೂ ಎಸೆಯಲಿ.</verse>
				<verse number="10">ಗುಲಾಮಗಿರಿಯಲ್ಲಿದ್ದ ನಿಮ್ಮನ್ನು ಬಿಡುಗಡೆ ಮಾಡಿ, ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಯೆಹೋವ ದೇವರ ಆಶ್ರಯದಿಂದ ಅಂಥವರು ನಿಮ್ಮನ್ನು ತಪ್ಪಿಸಬೇಕೆಂದು ಇದ್ದುದರಿಂದ, ಅಂಥವರನ್ನು ಕಲ್ಲು ಎಸೆದು ಕೊಲ್ಲಬೇಕು.</verse>
				<verse number="11">ಇಸ್ರಾಯೇಲರೆಲ್ಲಾ ಇದನ್ನು ಕೇಳಿ ಭಯಪಟ್ಟು, ಇನ್ನು ಮೇಲೆ ಕೆಟ್ಟದ್ದನ್ನು ಮಾಡದೆ ಇರುವರು.</verse>
				<verse number="12">ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಸಮಾಡುವುದಕ್ಕೆ ಕೊಡುವ ಯಾವುದಾದರೂ ಪಟ್ಟಣದಲ್ಲಿ</verse>
				<verse number="13">ದುಷ್ಟಜನರು ಎದ್ದು ತಮ್ಮ ಪಟ್ಟಣದಲ್ಲಿರುವ ಜನರನ್ನು, “ನೀವು ತಿಳಿಯದಿರುವ ಇತರ ದೇವರುಗಳನ್ನು ಪೂಜಿಸೋಣ ಬನ್ನಿರಿ,” ಎಂದು ಹೇಳಿ ದುರ್ಮಾಗಕ್ಕೆ ಎಳೆದಿದ್ದಾರೆ ಎಂಬ ಸುದ್ದಿ ನಿಮಗೆ ತಿಳಿಸಿದರೆ,</verse>
				<verse number="14">ನೀವು ಹುಡುಕಿ ಶೋಧಿಸಿ ಚೆನ್ನಾಗಿ ವಿಚಾರಣೆ ಮಾಡಬೇಕು. ಆ ಕಾರ್ಯವು ನಿಶ್ಚಯವಾಗಿ ಸತ್ಯವಾದರೆ, ಅಂಥ ಅಸಹ್ಯವು ನಿಮ್ಮಲ್ಲಿ ನಡೆದದ್ದಾದರೆ,</verse>
				<verse number="15">ಆ ಊರನ್ನು ಸಂಪೂರ್ಣವಾಗಿ ನಾಶಮಾಡಬೇಕು. ಅದನ್ನೂ, ಅದರಲ್ಲಿರುವ ಎಲ್ಲದನ್ನೂ, ಅದರ ಪಶುಗಳನ್ನೂ ಸಹ ಶಪಿಸಿ ಖಡ್ಗದಿಂದ ನಿರ್ಮೂಲ ಮಾಡಬೇಕು.</verse>
				<verse number="16">ಇದಲ್ಲದೆ ಆ ಊರಿನ ಎಲ್ಲಾ ಸಾಮಗ್ರಿಗಳನ್ನು ಅದರ ಬೀದಿಯ ಮಧ್ಯದಲ್ಲಿ ಕೂಡಿಸಿ, ಆ ಪಟ್ಟಣವನ್ನೂ, ಅದರ ಎಲ್ಲಾ ವಸ್ತುವನ್ನೂ ಸಂಪೂರ್ಣವಾಗಿ ನಿಮ್ಮ ದೇವರಾದ ಯೆಹೋವ ದೇವರಿಗೆ ದಹನಬಲಿಯಾಗಿ ಸುಟ್ಟುಬಿಡಬೇಕು. ಅದು ಎಂದಿಗೂ ಹಾಳುದಿಬ್ಬವಾಗಿರಬೇಕು; ಇನ್ನು ಮೇಲೆ ಅದನ್ನು ಕಟ್ಟಬಾರದು; ಆ ಶಾಪಗ್ರಸ್ತ ವಸ್ತುಗಳಲ್ಲಿ ಏನನ್ನೂ ತೆಗೆದುಕೊಳ್ಳಬಾರದು.</verse>
				<verse number="17">ಇದಲ್ಲದೆ ನೀವು ನಿಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕಾಪಾಡಿ,</verse>
				<verse number="18">ನಿಮ್ಮ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದಾಗ ಯೆಹೋವ ದೇವರು ತಮ್ಮ ಕೋಪವನ್ನು ಬಿಟ್ಟು, ತಿರುಗಿ ನಿಮಗೆ ದಯೆಯನ್ನು ತೋರಿಸಿ, ನಿಮ್ಮ ಮೇಲೆ ಕನಿಕರಪಟ್ಟು, ಅವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವರು.</verse>
			</chapter>
			<chapter number="14">
				<verse number="1">ನೀವು ನಿಮ್ಮ ದೇವರಾದ ಯೆಹೋವ ದೇವರ ಮಕ್ಕಳು. ನೀವು ಸತ್ತವರಿಗೋಸ್ಕರ ಗಾಯಮಾಡಿಕೊಳ್ಳಬಾರದು. ಮುಂದಲೆಯನ್ನು ಬೋಳಿಸಿಕೊಳ್ಳಬಾರದು.</verse>
				<verse number="2">ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ, ಯೆಹೋವ ದೇವರು ಭೂಮಿಯ ಮೇಲಿರುವ ಎಲ್ಲಾ ಜನರೊಳಗಿಂದ ನಿಮ್ಮನ್ನೇ ತಮ್ಮ ಅಮೂಲ್ಯವಾದ ಆಸ್ತಿಯಾಗಿ ಆಯ್ದುಕೊಂಡಿದ್ದಾರೆ.</verse>
				<verse number="3">ಅಸಹ್ಯವಾದ ಯಾವುದನ್ನಾದರೂ ತಿನ್ನಬಾರದು.</verse>
				<verse number="4">ನೀವು ತಿನ್ನಬಹುದಾದ ಪ್ರಾಣಿಗಳು ಯಾವವಂದರೆ: ಎತ್ತು, ಕುರಿ, ಮೇಕೆ,</verse>
				<verse number="5">ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ, ಕೊಂಡಗುರಿ ಇವುಗಳೇ.</verse>
				<verse number="6">ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ, ಅದು ಮೆಲುಕು ಹಾಕುವಂಥಾದ್ದಾದರೆ ಅದರ ಮಾಂಸವನ್ನು ತಿನ್ನಬಹುದು.</verse>
				<verse number="7">ಆದರೆ ಯಾವ ಪ್ರಾಣಿ ಮೆಲುಕು ಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ, ಒಂಟೆ, ಮೊಲ, ಬೆಟ್ಟದ ಮೊಲ ಇವು ಮೆಲುಕು ಹಾಕುವಂಥವುಗಳಾದರೂ, ಸೀಳುಗೊರಸು ಇಲ್ಲವಾದದ್ದರಿಂದ ಅವು ನಿಮಗೆ ಅಶುದ್ಧ.</verse>
				<verse number="8">ಹಂದಿಯನ್ನು ತಿನ್ನಬಾರದು. ಏಕೆಂದರೆ ಅದು ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲ. ಅದು ನಿಮಗೆ ಅಶುದ್ಧವೇ. ಅವುಗಳ ಮಾಂಸವನ್ನು ನೀವು ತಿನ್ನಬಾರದು, ಅವುಗಳ ಹೆಣವನ್ನು ಮುಟ್ಟಬಾರದು.</verse>
				<verse number="9">ನೀರಿನಲ್ಲಿ ಬಾಳುವ ಎಲ್ಲವುಗಳಲ್ಲಿ ಅಂದರೆ ನೀವು ಈಜು ರೆಕ್ಕೆಗಳುಳ್ಳ ಮತ್ತು ಪೊರೆ ಇರುವವುಗಳನ್ನು ತಿನ್ನಬಹುದು.</verse>
				<verse number="10">ಆದರೆ ರೆಕ್ಕಗಳೂ ಪೊರೆಗಳೂ ಇಲ್ಲದವುಗಳನ್ನೆಲ್ಲಾ ತಿನ್ನಬಾರದು. ಅವು ನಿಮಗೆ ಅಶುದ್ಧ.</verse>
				<verse number="11">ಶುದ್ಧವಾದ ಎಲ್ಲಾ ಪಕ್ಷಿಗಳನ್ನು ತಿನ್ನಬಹುದು.</verse>
				<verse number="12">ಪಕ್ಷಿ ಜಾತಿಯಲ್ಲಿ ನೀವು ತಿನ್ನಬಾರದವುಗಳು ಯಾವುವೆಂದರೆ: ಗರುಡ, ಬೆಟ್ಟದಹದ್ದು, ಕಪ್ಪು ರಣಹದ್ದು,</verse>
				<verse number="13">ಗಿಡುಗ, ಹಕ್ಕಿಸಾಲೆ, ಸಕಲವಿಧವಾದ ಹದ್ದು,</verse>
				<verse number="14">ಸಕಲವಿಧವಾದ ಕಾಗೆ,</verse>
				<verse number="15">ಉಷ್ಟ್ರಪಕ್ಷಿ, ಉಲೂಕ, ಚೀರು ಗೂಬೆ, ಕಡಲ ಹಕ್ಕಿ, ಸಕಲವಿಧವಾದ ಡೇಗೆ,</verse>
				<verse number="16">ಸಣ್ಣ ಗೂಬೆ, ದೊಡ್ಡ ಗೂಬೆ, ಬಿಳಿಗೂಬೆ,</verse>
				<verse number="17">ಮರಳುಗಾಡು ಗೂಬೆ, ರಣಹದ್ದು, ನೀರು ಕೋಳಿ,</verse>
				<verse number="18">ಕೊಕ್ಕರೆ, ನೀರುಕಾಗೆ, ಸಕಲವಿಧವಾದ ಬಕ, ಹೆಡೆಹಕ್ಕಿ ಮತ್ತು ಬಾವಲಿ.</verse>
				<verse number="19">ಇದಲ್ಲದೆ ಹಾರುವ ಎಲ್ಲಾ ಕ್ರಿಮಿಕೀಟಗಳು ನಿಮಗೆ ಅಶುದ್ಧವೇ. ಅವುಗಳನ್ನು ತಿನ್ನಬಾರದು.</verse>
				<verse number="20">ಶುದ್ಧವಾದ ಎಲ್ಲಾ ರೆಕ್ಕೆ ಉಳ್ಳ ಪಕ್ಷಿಗಳನ್ನು ತಿನ್ನಬಹುದು.</verse>
				<verse number="21">ತಾನೇ ಸತ್ತ ಯಾವುದನ್ನೂ ತಿನ್ನಬಾರದು. ನಿಮ್ಮ ಊರಲ್ಲಿರುವ ಅನ್ಯನಿಗೆ ತಿನ್ನಲು ಕೊಡಬಹುದು ಇಲ್ಲವೆ ಪರದೇಶದವನಿಗೆ ಮಾರಬಹುದು. ಏಕೆಂದರೆ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಜನರೇ. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಕುದಿಸಬಾರದು.</verse>
				<verse number="22">ನೀವು ಬಿತ್ತುವ ಹೊಲದಲ್ಲಿ ವರ್ಷ ವರ್ಷಕ್ಕೆ ಬರುವ ಹುಟ್ಟುವಳಿಯಿಂದ ದಶಮಾಂಶವನ್ನು ತಪ್ಪದೆ ಕೊಡಬೇಕು.</verse>
				<verse number="23">ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಓಲಿವ್ ಎಣ್ಣೆಗಳ ದಶಮಾಂಶವನ್ನೂ ನಿಮ್ಮ ದನಕುರಿಗಳಲ್ಲಿ ಚೊಚ್ಚಲುಗಳನ್ನೂ ನಿಮ್ಮ ದೇವರಾದ ಯೆಹೋವ ದೇವರ ಮುಂದೆ ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ದೇವರೇ ಆಯ್ದುಕೊಂಡ ಸ್ಥಳದಲ್ಲಿ ತಿನ್ನಬೇಕು. ಇದರಿಂದ ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ಎಂದೆಂದಿಗೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಕಲಿಯುವಿರಿ.</verse>
				<verse number="24">ನೀವು ಕಾಣಿಕೆಗಳನ್ನು ತೆಗೆದುಕೊಂಡು ಹೋಗುವುದಕ್ಕೆ ನಿಮಗೆ ದಾರಿ ದೂರವಾಗಿದ್ದರೆ, ಅಥವಾ ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಂಡ ಸ್ಥಳವು ನಿಮಗೆ ದೂರವಾಗಿದ್ದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಆಶೀರ್ವದಿಸಿದ ಕಾಲದಲ್ಲಿ,</verse>
				<verse number="25">ಅವುಗಳನ್ನು ಮಾರಿ ಹಣವನ್ನಾಗಿ ಮಾರ್ಪಡಿಸಿ, ಆ ಹಣವನ್ನು ನಿಮ್ಮ ಕೈಯಲ್ಲಿ ತೆಗೆದುಕೊಂಡು, ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಹೋಗಿರಿ.</verse>
				<verse number="26">ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ, ಮೊದಲಾದವುಗಳನ್ನು ಹಣದಿಂದ ಕೊಂಡುಕೊಂಡು ನೀವೂ, ನಿಮ್ಮ ಮನೆಯವರೂ, ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಊಟಮಾಡಿ, ಸಂತೋಷವಾಗಿರಬೇಕು.</verse>
				<verse number="27">ನಿಮ್ಮ ಊರುಗಳಲ್ಲಿರುವ ಲೇವಿಯರನ್ನು ಕೈಬಿಡಬಾರದು. ಏಕೆಂದರೆ ಅವರಿಗೆ ನಿಮ್ಮ ಸಂಗಡ ಪಾಲೂ, ಸೊತ್ತೂ ಇಲ್ಲ.</verse>
				<verse number="28">ಪ್ರತಿ ಮೂರು ವರ್ಷಗಳ ಅಂತ್ಯದಲ್ಲಿ ಆಯಾ ವರ್ಷದಲ್ಲಿ ನಿಮಗೆ ಸಿಕ್ಕಿದ ಹುಟ್ಟುವಳಿಯ ದಶಮಭಾಗವನ್ನೆಲ್ಲಾ ಹೊರಗೆ ತಂದು ನಿಮ್ಮ ಊರಲ್ಲಿಯೇ ಕೂಡಿಸಬೇಕು.</verse>
				<verse number="29">ಆಗ ನಿಮ್ಮ ಸಂಗಡ ಪಾಲನ್ನೂ, ಸೊತ್ತನ್ನೂ ಹೊಂದದ ಲೇವಿಯರೂ, ನಿಮ್ಮ ಊರಲ್ಲಿರುವ ಅನ್ಯದೇಶದವರೂ, ದಿಕ್ಕಿಲ್ಲದವರೂ, ವಿಧವೆಯರೂ ಬಂದು ತಿಂದು ತೃಪ್ತರಾಗಲಿ. ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನೂ, ನೀವು ಮಾಡುವ ಎಲ್ಲಾ ಪ್ರಯತ್ನಗಳನ್ನೂ ಆಶೀರ್ವದಿಸುವರು.</verse>
			</chapter>
			<chapter number="15">
				<verse number="1">ಪ್ರತಿ ಏಳು ವರ್ಷಗಳ ಅಂತ್ಯದಲ್ಲಿ ಎಲ್ಲರ ಸಾಲಗಳನ್ನೂ ಮನ್ನಾಮಾಡಬೇಕು.</verse>
				<verse number="2">ನೀವು ಮಾಡಬೇಕಾದ ಕ್ರಮವೇನೆಂದರೆ: ಸಾಲ ಕೊಟ್ಟವರೆಲ್ಲರೂ ತಮ್ಮ ನೆರೆಯವರಾದ ಇಸ್ರಾಯೇಲರಿಗೆ ಕೊಟ್ಟ ಸಾಲವನ್ನು ಬಿಟ್ಟುಬಿಡಬೇಕು. ಅದು ಯೆಹೋವ ದೇವರ ಬಿಡುಗಡೆಯ ವರ್ಷ ಎಂದು ಪ್ರಕಟವಾಗಿರುವುದರಿಂದ ತನ್ನ ನೆರೆಯವನಿಂದಲೂ, ತನ್ನ ಸಹೋದರನಿಂದಲೂ ಸಾಲವನ್ನು ಕೇಳಬಾರದು.</verse>
				<verse number="3">ಅನ್ಯದೇಶದವರಿಂದ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದು. ಆದರೆ ಸ್ವದೇಶದವನಾದ ನಿಮ್ಮ ಸಹೋದರರು ಕೊಡಬೇಕಾದ ಸಾಲವನ್ನು ನೀವು ಮನ್ನಾಮಾಡಬೇಕು.</verse>
				<verse number="4">ಏಕೆಂದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸೊತ್ತಾಗಿ ಕೊಡುವ ದೇಶದಲ್ಲಿ ಯೆಹೋವ ದೇವರು ನಿಮ್ಮನ್ನು ಬಹಳವಾಗಿ ಆಶೀರ್ವದಿಸುವರು. ಹೀಗಾಗಿ ನಿಮ್ಮಲ್ಲಿ ಬಡವರೇ ಇರುವುದಿಲ್ಲ.</verse>
				<verse number="5">ನೀವು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯವನ್ನು ಎಚ್ಚರಿಕೆಯಿಂದ ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಎಲ್ಲಾ ಆಜ್ಞೆಯನ್ನು ಕಾಪಾಡಿ ನಡೆಯಿರಿ.</verse>
				<verse number="6">ನಿಶ್ಚಯವಾಗಿ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದಂತೆ ನಿನ್ನನ್ನು ಆಶೀರ್ವದಿಸುವರು. ನೀವು ಸಾಲ ತೆಗೆದುಕೊಳ್ಳದೆ ಅನೇಕ ಜನಾಂಗಗಳಿಗೆ ಸಾಲ ಕೊಡುವಿರಿ. ಅನೇಕ ಜನಾಂಗಗಳನ್ನು ಆಳುವಿರಿ, ಅವರು ನಿಮ್ಮನ್ನು ಆಳುವುದಿಲ್ಲ.</verse>
				<verse number="7">ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ನಿಮ್ಮ ದೇಶದಲ್ಲಿ, ನಿಮ್ಮ ಸಹೋದರರಲ್ಲಿ ಬಡವರು ಇದ್ದರೆ, ನಿಮ್ಮ ಹೃದಯವನ್ನು ಕಠಿಣ ಮಾಡಿಕೊಳ್ಳಬೇಡಿರಿ. ನಿಮ್ಮ ಕೈಯನ್ನು ನಿಮ್ಮ ಬಡ ಸಹೋದರರಿಗೆ ಮುಚ್ಚಿಕೊಳ್ಳಬೇಡಿರಿ.</verse>
				<verse number="8">ನಿಮ್ಮ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು. ಅವನಿಗೆ ಅಗತ್ಯವಾದಷ್ಟು ಕೊಡಬೇಕು.</verse>
				<verse number="9">“ಸಾಲ ಬಿಡುಗಡೆಯ ವರ್ಷವಾದ ಏಳನೆಯ ವರ್ಷವು ಸಮೀಪವಾಯಿತು,” ಎಂಬ ದುಷ್ಟ ಆಲೋಚನೆ ನಿಮ್ಮ ಹೃದಯದಲ್ಲಿ ಹುಟ್ಟಿ, ನಿಮ್ಮ ಬಡ ಸಹೋದರನ ಮೇಲೆ ಕಠಿಣವಾಗಿ, ನೀವು ಅವನಿಗೆ ಏನೂ ಕೊಡದೆ ಇರಬೇಡಿರಿ. ಅವನು ನಿಮಗೆ ವಿರೋಧವಾಗಿ ಯೆಹೋವ ದೇವರಿಗೆ ಮೊರೆ ಇಟ್ಟಾಗ, ನಿಮ್ಮಲ್ಲಿ ಅಪರಾಧ ಉಂಟಾಗದಂತೆ ನೋಡಿಕೊಳ್ಳಿರಿ.</verse>
				<verse number="10">ಕೊಡುವಾಗ ಬೇಸರಗೊಳ್ಳದೇ ಉದಾರಮನಸ್ಸಿನಿಂದ ಕೊಡಿರಿ. ಏಕೆಂದರೆ ಇದಕ್ಕೋಸ್ಕರವೇ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ, ನೀವು ಕೈಹಾಕುವುದೆಲ್ಲದರಲ್ಲಿಯೂ ಆಶೀರ್ವದಿಸುವರು.</verse>
				<verse number="11">ಏಕೆಂದರೆ ಬಡವರು ದೇಶದಲ್ಲಿ ಇಲ್ಲದೆ ಹೋಗುವುದಿಲ್ಲ. ಆದ್ದರಿಂದ ನಿಮ್ಮ ಸಹೋದರರಿಗೂ, ನಿಮ್ಮ ನಾಡಿನ ದರಿದ್ರರಿಗೂ, ಬಡವರಿಗೂ ನಿಮ್ಮ ಕೈಯನ್ನು ವಿಶಾಲವಾಗಿ ತೆರೆಯಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ.</verse>
				<verse number="12">ನಿಮ್ಮ ಸಹೋದರನಾದ ಹಿಬ್ರಿಯನಾಗಲಿ, ಒಬ್ಬ ಹಿಬ್ರಿಯ ಸ್ತ್ರೀಯಾಗಲಿ ನಿಮಗೆ ಗುಲಾಮರಾಗಿ, ಆರು ವರ್ಷ ನಿಮಗೆ ಮಾರಾಟವಾಗಿದ್ದರೆ ಮತ್ತು ಸೇವೆ ಮಾಡಿದ್ದರೆ, ಏಳನೆಯ ವರ್ಷದಲ್ಲಿ ಅವರನ್ನು ಬಿಡುಗಡೆ ಮಾಡಿ ಕಳುಹಿಸಿಬಿಡಿರಿ.</verse>
				<verse number="13">ಹಾಗೆ ಬಿಟ್ಟುಬಿಡುವಾಗ ಬರೀ ಕೈಯಲ್ಲಿ ಕಳುಹಿಸಬಾರದು.</verse>
				<verse number="14">ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಶೀರ್ವಾದವಾಗಿ ಕೊಟ್ಟದ್ದರಲ್ಲಿ ಅಂದರೆ ನಿಮ್ಮ ಕುರಿಮಂದೆಯಿಂದಲೂ ಕಣದಿಂದಲೂ ದ್ರಾಕ್ಷಿ ಆಲೆಯದಿಂದಲೂ ಅವರಿಗೆ ಧಾರಾಳವಾಗಿ ಕೊಟ್ಟುಕಳುಹಿಸಬೇಕು.</verse>
				<verse number="15">ನೀವು ಈಜಿಪ್ಟ್ ದೇಶದಲ್ಲಿ ದಾಸರಾಗಿದ್ದಿರಿ ಎಂದೂ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಿರಿ. ಆದ್ದರಿಂದ ನಾನು ಈ ಹೊತ್ತು ಇದನ್ನು ನಿಮಗೆ ಆಜ್ಞಾಪಿಸುತ್ತೇನೆ.</verse>
				<verse number="16">ಒಂದು ವೇಳೆ ಆ ಗುಲಾಮನು, ನಿಮ್ಮನ್ನೂ, ನಿಮ್ಮ ಮನೆಯನ್ನೂ ಪ್ರೀತಿಸುವುದರಿಂದಲೂ, ನಿಮ್ಮ ಬಳಿ ಸುಖವಾಗಿರುವುದರಿಂದಲೂ, “ನಾನು ಬಿಡುಗಡೆಯಾಗಿ ಹೋಗುವುದಕ್ಕೆ ಮನಸ್ಸಿಲ್ಲ,” ಎಂದು ಹೇಳಿದರೆ,</verse>
				<verse number="17">ನೀವು ದಬ್ಬಳವನ್ನು ತೆಗೆದುಕೊಂಡು ಅವನ ಕಿವಿಯನ್ನು ಬಾಗಿಲಿಗೆ ತಗಲಿಸಿ ಚುಚ್ಚಬೇಕು. ಆಗ ಅವನು ನಿತ್ಯವಾಗಿ ನಿಮ್ಮ ದಾಸನಾಗಿರುವನು. ನಿಮ್ಮ ದಾಸಿಗೂ ಹಾಗೆಯೇ ಮಾಡಬೇಕು.</verse>
				<verse number="18">ಒಬ್ಬ ಗುಲಾಮನನ್ನು ನಿಮ್ಮಿಂದ ಬಿಡುಗಡೆಯಾಗಿ ಕಳುಹಿಸುವುದು ನಿಮಗೆ ಕಷ್ಟವೆಂದು ಹೇಳಿಕೊಳ್ಳಬಾರದು. ಏಕೆಂದರೆ ಅವನು ಆರು ವರ್ಷ ನಿಮ್ಮ ದಾಸನಾಗಿದ್ದದರಿಂದ ಸಂಬಳದ ಸೇವಕನಿಗಿಂತ ಎರಡಷ್ಟಾಗಿದ್ದನು. ಹೀಗೆ ನಿಮ್ಮ ದೇವರಾದ ಯೆಹೋವ ದೇವರು ನೀವು ಮಾಡುವುದೆಲ್ಲದರಲ್ಲಿಯೂ ನಿಮ್ಮನ್ನು ಆಶೀರ್ವದಿಸುವರು.</verse>
				<verse number="19">ನಿಮ್ಮ ದನಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠಿಸಬೇಕು. ನಿಮ್ಮ ಹೋರಿಯ ಚೊಚ್ಚಲಿನಿಂದ ನೀವು ಕೆಲಸ ಮಾಡಿಸಬಾರದು. ನಿಮ್ಮ ಕುರಿಯ ಚೊಚ್ಚಲಲ್ಲಿ ಉಣ್ಣೆ ಕತ್ತರಿಸಬಾರದು.</verse>
				<verse number="20">ನಿಮ್ಮ ದೇವರಾದ ಯೆಹೋವ ದೇವರ ಮುಂದೆ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿ ನೀವು ನಿಮ್ಮ ಮನೆಯವರ ಸಹಿತವಾಗಿ ಅವುಗಳಿಂದ ಪ್ರತಿವರ್ಷ ಮಾಂಸಾಹಾರವಾಗಿರಬೇಕು.</verse>
				<verse number="21">ಅದರಲ್ಲಿ ಏನಾದರೂ ಊನವಿದ್ದರೆ ಅಂದರೆ, ಅದು ಕುಂಟಾಗಲಿ, ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾಗಿದ್ದರೆ, ಅದನ್ನು ನಿಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸಬಾರದು.</verse>
				<verse number="22">ಅದನ್ನು ನಿಮ್ಮ ಊರಲ್ಲಿ ಮಾಂಸಾಹಾರವಾಗಿರಲಿ. ಆಚಾರವಾಗಿ ಶುದ್ಧರೂ, ಅಶುದ್ಧರೂ ಕೂಡ ಅದನ್ನು ಕಡವೆ ಜಿಂಕೆಗಳನ್ನು ಮಾಂಸಾಹಾರವಾಗಿ ಮಾಡಿಕೊಂಡ ಹಾಗೆ ತಿನ್ನಬಹುದು.</verse>
				<verse number="23">ಅದರ ರಕ್ತವನ್ನು ಮಾತ್ರ ಭುಜಿಸಬಾರದು, ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.</verse>
			</chapter>
			<chapter number="16">
				<verse number="1">ನೀವು ಅಬೀಬ ತಿಂಗಳಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಬೇಕು. ಏಕೆಂದರೆ ಅಬೀಬ ತಿಂಗಳಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ರಾತ್ರಿಯಲ್ಲಿ ಈಜಿಪ್ಟಿನೊಳಗಿಂದ ಹೊರಗೆ ಬರಮಾಡಿದರು.</verse>
				<verse number="2">ಹೀಗಿರುವುದರಿಂದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಳ್ಳುವ ಸ್ಥಳದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಆಡುಕುರಿಗಳಲ್ಲಾಗಲಿ, ದನಗಳಲ್ಲಿ ಆಗಲಿ ಪಸ್ಕದ ಪಶುವನ್ನಾಗಿ ಅರ್ಪಿಸಬೇಕು.</verse>
				<verse number="3">ಅದರೊಂದಿಗೆ ಹುಳಿರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿಯಿಲ್ಲದ ಶ್ರಮೆಯ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ತ್ವರೆಯಾಗಿ ಈಜಿಪ್ಟ್ ದೇಶದೊಳಗಿಂದ ನೀವು ಹೊರಗೆ ಬಂದದ್ದರಿಂದ ನೀವು ಜೀವಿಸುವ ದಿವಸಗಳಲ್ಲೆಲ್ಲಾ ಇದನ್ನು ಜ್ಞಾಪಕಮಾಡಿಕೊಳ್ಳಬೇಕು.</verse>
				<verse number="4">ಏಳು ದಿವಸ ಹುಳಿ ಕಲಸಿದ ರೊಟ್ಟಿ ನಿಮ್ಮ ಮೇರೆಗಳಲ್ಲಿ ಎಲ್ಲಿಯೂ ಕಾಣಬಾರದು. ಮೊದಲನೆಯ ದಿವಸದ ಸಾಯಂಕಾಲದಲ್ಲಿ ನೀವು ಯಜ್ಞವಾಗಿ ಸಮರ್ಪಿಸಿದ ಮಾಂಸದಲ್ಲಿ ಏನೂ ಮರುದಿವಸದವರೆಗೆ ಉಳಿಯಬಾರದು.</verse>
				<verse number="5">ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ಯಾವ ಊರಲ್ಲಾದರೂ ಪಸ್ಕವನ್ನು ಅರ್ಪಿಸಬಾರದು.</verse>
				<verse number="6">ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕೆ ಆಯ್ದುಕೊಳ್ಳುವ ಸ್ಥಳದಲ್ಲೇ ಸೂರ್ಯನು ಅಸ್ತಮಿಸುವಾಗ ನೀವು ಈಜಿಪ್ಟನ್ನು ಬಿಟ್ಟುಹೋದ ಸಮಯದಲ್ಲಿ ಅರ್ಪಿಸಬೇಕು.</verse>
				<verse number="7">ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿ ಅದನ್ನು ಬೇಯಿಸಿ ತಿನ್ನಬೇಕು. ಮರುದಿವಸದಲ್ಲಿ ಹಿಂದಿರುಗಿ ನಿಮ್ಮ ಗುಡಾರಗಳಿಗೆ ಹೋಗಬಹುದು.</verse>
				<verse number="8">ಆರು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿವಸದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸಭೆಯಾಗಿ ಕೂಡಿಬರಬೇಕು. ಆ ದಿನದಲ್ಲಿ ಕೆಲಸಮಾಡಬಾರದು.</verse>
				<verse number="9">ಏಳು ವಾರಗಳನ್ನು ನನಗಾಗಿ ಎಣಿಸಿಕೊಳ್ಳಬೇಕು. ಪೈರಿನಲ್ಲಿ ಕುಡುಗೋಲು ಮೊದಲು ಹಾಕಿದಂದಿನಿಂದ ಏಳು ವಾರಗಳನ್ನು ಎಣಿಸಿಕೊಳ್ಳುವುದಕ್ಕೆ ಪ್ರಾರಂಭಿಸಬೇಕು.</verse>
				<verse number="10">ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ಅರ್ಪಿಸಿ, ನಿಮ್ಮ ದೇವರಾದ ಯೆಹೋವ ದೇವರಿಗೆ ವಾರಗಳ ಹಬ್ಬವನ್ನು ಆಚರಿಸಬೇಕು</verse>
				<verse number="11">ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡು ಹೆಣ್ಣುಮಕ್ಕಳು, ದಾಸದಾಸಿಯರು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಂದೆತಾಯಿ ಇಲ್ಲದವರು ಹಾಗೂ ವಿಧವೆಯರು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.</verse>
				<verse number="12">ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಆಚರಿಸಬೇಕು.</verse>
				<verse number="13">ನೀವು ಕಣದ ಕೆಲಸವನ್ನೂ ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ, ಏಳು ದಿನಗಳವರೆಗೂ ಗುಡಾರಗಳ ಹಬ್ಬವನ್ನು ಆಚರಿಸಬೇಕು.</verse>
				<verse number="14">ಅದರಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ ದಾಸದಾಸಿಯರೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಂದೆತಾಯಿ ಇಲ್ಲದವರೂ ಹಾಗೂ ವಿಧವೆಯರೂ ಸಂಭ್ರಮದಿಂದಿರಬೇಕು.</verse>
				<verse number="15">ನಿಮ್ಮ ದೇವರಾದ ಯೆಹೋವ ದೇವರಿಗೆ ಏಳು ದಿವಸ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿ ಹಬ್ಬ ಮಾಡಬೇಕು. ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಎಲ್ಲಾ ಆದಾಯದಲ್ಲಿಯೂ, ನಿಮ್ಮ ಎಲ್ಲಾ ಕೆಲಸದಲ್ಲಿಯೂ ಆಶೀರ್ವದಿಸುವುದರಿಂದ ನೀವು ಪರಿಪೂರ್ಣ ಸಂತೋಷದಿಂದ ಇರಬೇಕು.</verse>
				<verse number="16">ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಮತ್ತು ಗುಡಾರಗಳ ಹಬ್ಬದಲ್ಲಿಯೂ ವರ್ಷಕ್ಕೆ ಮೂರು ಸಾರಿ ನಿಮ್ಮ ಎಲ್ಲಾ ಪುರುಷರು, ನಿಮ್ಮ ಯೆಹೋವ ದೇವರ ಮುಂದೆ ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಯೆಹೋವ ದೇವರ ಸಮ್ಮುಖಕ್ಕೆ ಬರೀ ಕೈಯಿಂದ ಬರಬಾರದು.</verse>
				<verse number="17">ನಿಮ್ಮ ಯೆಹೋವ ದೇವರು ನಿಮಗೆ ಕೊಡುವ ಆಶೀರ್ವಾದದ ಪ್ರಕಾರ ಒಬ್ಬೊಬ್ಬನೂ ಕೊಡಬೇಕು.</verse>
				<verse number="18">ಯೆಹೋವ ದೇವರು ನಿಮ್ಮ ಗೋತ್ರಗಳ ಪ್ರಕಾರ ಕೊಡುವ ನಿಮ್ಮ ಎಲ್ಲಾ ಊರುಗಳಲ್ಲಿ ನಿಮಗೆ ನ್ಯಾಯಾಧಿಪತಿಗಳನ್ನೂ, ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು. ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.</verse>
				<verse number="19">ನೀವು ನ್ಯಾಯವನ್ನು ಕೆಡಿಸಬಾರದು. ನೀವು ಮುಖದಾಕ್ಷಿಣ್ಯ ನೋಡಬಾರದು, ಇಲ್ಲವೆ ಲಂಚವನ್ನು ತೆಗೆದುಕೊಳ್ಳಬಾರದು, ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.</verse>
				<verse number="20">ನೀವು ಬದುಕಿ ನಿಮ್ಮ ಯೆಹೋವ ದೇವರು ನಿಮಗೆ ಕೊಡುವ ದೇಶವನ್ನು ಸ್ವಾಧೀನಪಡಿಸಿಕೊಳ್ಳುವ ಹಾಗೆ ನ್ಯಾಯವನ್ನು ಅಂದರೆ ಕೇವಲ ನ್ಯಾಯವನ್ನೇ ಅನುಸರಿಸಬೇಕು.</verse>
				<verse number="21">ನಿಮ್ಮ ಯೆಹೋವ ದೇವರಿಗಾಗಿ ಕಟ್ಟುವ ಬಲಿಪೀಠದ ಸಮೀಪದಲ್ಲಿ ಮರದಿಂದ ಮಾಡಿದ ಯಾವುದೇ ಅಶೇರ ಸ್ತಂಭವನ್ನು ನಿಲ್ಲಿಸಬಾರದು.</verse>
				<verse number="22">ಯಾವ ವಿಗ್ರಹವನ್ನೂ ನಿಲ್ಲಿಸಬಾರದು. ಇದನ್ನು ನಿನ್ನ ಯೆಹೋವ ದೇವರು ದ್ವೇಷಿಸುತ್ತಾರೆ.</verse>
			</chapter>
			<chapter number="17">
				<verse number="1">ಯಾವುದೇ ಊನತೆ ಅಥವಾ ಅವಲಕ್ಷಣವುಳ್ಳ ಹೋರಿಯನ್ನಾಗಲಿ, ಕುರಿಯನ್ನಾಗಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಅರ್ಪಿಸಬಾರದು. ಏಕೆಂದರೆ ಅದು ನಿಮ್ಮ ದೇವರಾದ ಯೆಹೋವ ದೇವರಿಗೆ ಅಸಹ್ಯವೇ.</verse>
				<verse number="2">ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ಯಾವುದೇ ಊರಿನಲ್ಲಿ, ಯಾವ ಪುರುಷನಾಗಲಿ, ಸ್ತ್ರೀಯಾಗಲಿ ಯೆಹೋವ ದೇವರ ಒಡಂಬಡಿಕೆಯನ್ನು ಮೀರಿ ಅವರ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ನಡೆಸಲು ಸಾಧ್ಯ.</verse>
				<verse number="3">ಅಂದರೆ, ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ನಕ್ಷತ್ರಗಳನ್ನಾಗಲಿ, ಬೇರೆ ದೇವರುಗಳನ್ನಾಗಲಿ, ನನ್ನ ಆಜ್ಞೆಗೆ ವಿರೋಧವಾಗಿ ಅವುಗಳನ್ನು ಆರಾಧಿಸಿದರೆ,</verse>
				<verse number="4">ಆ ಸಂಗತಿಯನ್ನು ನೀವು ಕೇಳಿದಾಗ ಅದನ್ನು ಕೂಲಂಕಷವಾಗಿ ತನಿಖೆ ಮಾಡಬೇಕು. ಆಗ ಇಸ್ರಾಯೇಲರಲ್ಲಿ ಯಾರಿಂದಾದರೂ ಆ ಅಸಹ್ಯಕರವಾದ ಕಾರ್ಯವು ನಡೆದದ್ದು ಸತ್ಯವೆಂದು ತಿಳಿದುಬಂದರೆ,</verse>
				<verse number="5">ಆಗ ನೀವು ಆ ಪುರುಷನನ್ನಾಗಲಿ, ಸ್ತ್ರೀಯನ್ನಾಗಲಿ ಊರ ಹೊರಗೆ ತಂದು, ಅವರು ಸಾಯುವಂತೆ ಅವರ ಮೇಲೆ ಕಲ್ಲೆಸೆಯಬೇಕು.</verse>
				<verse number="6">ಒಬ್ಬನ ಸಾಕ್ಷಿಯ ಮಾತಿನಿಂದ ಮಾತ್ರ ಯಾರಿಗೂ ಮರಣಶಿಕ್ಷೆಯಾಗಬಾರದು. ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಸಾಕ್ಷಿಗಳು ಇಲ್ಲವೆ ಮೂವರು ಸಾಕ್ಷಿಗಳು ಬೇಕು.</verse>
				<verse number="7">ಅವನನ್ನು ಕೊಲ್ಲುವ ಮೊದಲು ಸಾಕ್ಷಿಗಳಾದ ಎಲ್ಲಾ ಜನರು ತಮ್ಮ ಕೈಗಳನ್ನು ಅವನ ಮೇಲೆ ಇಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.</verse>
				<verse number="8">ನಿಮ್ಮ ಊರುಗಳಲ್ಲಿ ಉಂಟಾದ ವಿವಾದಗಳ ವಿಷಯವಾಗಿ ಅಂದರೆ, ಕೊಲೆಯ ವ್ಯಾಜ್ಯವಾಗಲಿ, ವಾದಿ ಪ್ರತಿವಾದ ವ್ಯಾಜ್ಯವಾಗಲಿ, ಹೊಡೆದಾಟದ ವ್ಯಾಜ್ಯವಾಗಲಿ, ನಿಮಗೆ ನ್ಯಾಯತೀರಿಸುವುದು ಕಷ್ಟವಾದರೆ, ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಹೋಗಿರಿ.</verse>
				<verse number="9">ನೀವು ಯಾಜಕರಾದ ಲೇವಿಯರ ಬಳಿಗೂ, ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು. ಅವರು ನಿಮಗೆ ಆ ತೀರ್ಪನ್ನು ತಿಳಿಸುವರು.</verse>
				<verse number="10">ಅವರು ನಿಮಗೆ ಯೆಹೋವ ದೇವರು ಆಯ್ದುಕೊಳ್ಳುವ ಆ ಸ್ಥಳದಿಂದ ತಿಳಿಸುವ ತೀರ್ಪಿನ ಪ್ರಕಾರ ನೀವು ಮಾಡಿ, ಅವರು ನಿಮಗೆ ಬೋಧಿಸುವುದನ್ನೇ ನೀವು ಕೈಗೊಂಡು ನಡೆಯಬೇಕು.</verse>
				<verse number="11">ಅವರು ನಿಮಗೆ ಬೋಧಿಸುವ ತೀರ್ಪಿನ ಪ್ರಕಾರವೂ, ಅವರು ನಿಮಗೆ ಹೇಳುವ ನ್ಯಾಯದ ಪ್ರಕಾರವೂ ನೀವು ಮಾಡಬೇಕು. ಅವರು ನಿಮಗೆ ತಿಳಿಸುವ ವಾಕ್ಯವನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ತಿರುಗಬಾರದು.</verse>
				<verse number="12">ಅಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸೇವೆ ಮಾಡುವುದಕ್ಕೆ ನಿಂತ ಯಾಜಕನ ಮಾತನ್ನಾದರೂ, ನ್ಯಾಯಾಧಿಪತಿಯ ಮಾತನ್ನಾದರೂ ಕೇಳದೆ ಅಹಂಕಾರದಿಂದ ಏನಾದರೂ ಮಾಡುವುದಾದರೆ, ಆ ಮನುಷ್ಯನು ಸಾಯಲೇಬೇಕು. ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.</verse>
				<verse number="13">ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಹಾಗೆ ಮಾಡಲಾರರು.</verse>
				<verse number="14">ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಬಂದು, ಅದನ್ನು ಸ್ವಾಧೀನಪಡಿಸಿಕೊಂಡು, ಅದರಲ್ಲಿ ವಾಸವಾಗಿರುವಾಗ, “ನಮ್ಮ ಸುತ್ತಲಿರುವ ಎಲ್ಲಾ ಜನಾಂಗಗಳ ಹಾಗೆ ನಮಗೆ ಅರಸನನ್ನು ಇಟ್ಟುಕೊಳ್ಳುತ್ತೇವೆ,” ಎಂದು ಹೇಳಿಕೊಳ್ಳಬಹುದು.</verse>
				<verse number="15">ನಿಮ್ಮ ದೇವರಾದ ಯೆಹೋವ ದೇವರು ಆಯ್ದುಕೊಳ್ಳುವವನನ್ನು ನಿಮಗೆ ಅರಸನನ್ನಾಗಿ ನೇಮಿಸಿಕೊಳ್ಳಬೇಕು. ನಿಮ್ಮ ಇಸ್ರಾಯೇಲ್ ಸಹೋದರರಲ್ಲಿಂದ ಒಬ್ಬನನ್ನು ನಿಮ್ಮ ಅರಸನನ್ನಾಗಿ ನೇಮಿಸಿಕೊಳ್ಳಬೇಕು. ನಿಮ್ಮ ಸಹೋದರನಲ್ಲದ ಅನ್ಯದೇಶದವನನ್ನು ನಿಮ್ಮ ಮೇಲೆ ನೇಮಿಸಿಕೊಳ್ಳಬಾರದು.</verse>
				<verse number="16">ಅರಸನು ತನಗಾಗಿ ಕುದುರೆಗಳನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನರನ್ನು ಈಜಿಪ್ಟ್ ದೇಶಕ್ಕೆ ಕಳುಹಿಸಬಾರದು. “ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗಬಾರದು,” ಎಂದು ಯೆಹೋವ ದೇವರು ನಿಮಗೆ ಹೇಳಿದ್ದಾರೆ.</verse>
				<verse number="17">ಅರಸನು ದಾರಿತಪ್ಪಿ ಹೋಗದಂತೆ ತನಗೆ ಹೆಚ್ಚು ಜನ ಹೆಂಡತಿಯರನ್ನು ಮದುವೆ ಮಾಡಿಕೊಳ್ಳಬಾರದು. ಅವನು ತನಗಾಗಿ ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು.</verse>
				<verse number="18">ಅರಸನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆ ಮಾಡುವ ಲೇವಿಯರ ವಶದಲ್ಲಿ ಇರುವ ಈ ದೇವರ ನಿಯಮ ಗ್ರಂಥದ ಒಂದು ಪ್ರತಿಯನ್ನು ತನಗಾಗಿ ಪುಸ್ತಕ ರೂಪವಾಗಿ ಬರೆಯಿಸಿಕೊಳ್ಳಬೇಕು.</verse>
				<verse number="19">ಅವನು ಗರ್ವದಿಂದ ತನ್ನ ಸ್ವದೇಶದವರನ್ನು ಹೀಯಾಳಿಸಬಾರದು. ಯೆಹೋವ ದೇವರ ಆಜ್ಞೆಯನ್ನು ಮೀರಿ ಎಡಬಲಕ್ಕೆ ತಿರುಗಿಕೊಳ್ಳಬಾರದು. ದೇವರಾದ ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವನಾಗಿರಬೇಕು. ಈ ದೇವರ ನಿಯಮದ ಎಲ್ಲಾ ವಾಕ್ಯಗಳನ್ನು, ತೀರ್ಪುಗಳನ್ನು ಅನುಸರಿಸಲು ಅಭ್ಯಾಸ ಮಾಡಿಕೊಳ್ಳಬೇಕು. ಈ ಕಾರಣ ಈ ಗ್ರಂಥ ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನವೆಲ್ಲಾ ಇದನ್ನು ಓದಿಕೊಳ್ಳುತ್ತಾ ಇರಬೇಕು.</verse>
				<verse number="20">ಹೀಗೆ ಮಾಡಿದರೆ, ಅವನೂ, ಅವನ ಸಂತತಿಯವರೂ ದೀರ್ಘಕಾಲ ಇಸ್ರಾಯೇಲರ ಮೇಲೆ ರಾಜ್ಯಾಧಿಕಾರ ನಡೆಸುವರು.</verse>
			</chapter>
			<chapter number="18">
				<verse number="1">ಯಾಜಕರಾದ ಲೇವಿಯರಿಗೂ, ಆ ಎಲ್ಲಾ ಲೇವಿಯ ಗೋತ್ರಕ್ಕೂ, ಇಸ್ರಾಯೇಲಿನ ಸಂಗಡ ಪಾಲೂ ಸೊತ್ತೂ ಇರಬಾರದು. ಅವರು ಯೆಹೋವ ದೇವರಿಗೆ ಸಮರ್ಪಿಸಿದ ದಹನಬಲಿಯ ಕಾಣಿಕೆಗಳ ಮೇಲೆ ಆಧಾರಮಾಡಿಕೊಂಡು ಜೀವಿಸಬೇಕು. ಅದು ಅವರ ಬಾಧ್ಯತೆಯಾಗಿದೆ.</verse>
				<verse number="2">ಲೇವಿಯರಿಗೆ ಅವರ ಸಹೋದರರ ಮಧ್ಯದಲ್ಲಿ ಸೊತ್ತಿರಬಾರದು. ಯೆಹೋವ ದೇವರು ಅವರಿಗೆ ಹೇಳಿದ ಹಾಗೆ ದೇವರೇ ಅವರ ಸೊತ್ತು.</verse>
				<verse number="3">ಎತ್ತನ್ನಾಗಲಿ, ಕುರಿಯನ್ನಾಗಲಿ ಬಲಿ ಅರ್ಪಿಸುವವರಿಂದ ಯಾಜಕರಿಗೆ ಸಿಕ್ಕುವ ಪಾಲು, ಅವುಗಳ ಮುಂದೊಡೆ, ದವಡೆ ಹಾಗೂ ಒಳಗಿನ ಭಾಗಗಳು.</verse>
				<verse number="4">ನಿಮ್ಮ ಧಾನ್ಯ, ಹೊಸ ದ್ರಾಕ್ಷಾರಸ, ಓಲಿವ್ ಎಣ್ಣೆಗಳ ಪ್ರಥಮ ಫಲವನ್ನೂ, ನಿಮ್ಮ ಕುರಿಗಳ ಉಣ್ಣೆಯಲ್ಲಿ ಪ್ರಥಮವಾದದ್ದನ್ನೂ ಅವರಿಗೆ ಕೊಡಬೇಕು.</verse>
				<verse number="5">ಏಕೆಂದರೆ ಅವರೂ, ಅವರ ಪುತ್ರರೂ ನಿತ್ಯವಾಗಿ ಯೆಹೋವ ದೇವರ ಹೆಸರಿನಲ್ಲಿ ಸೇವೆಮಾಡುತ್ತಾ ನಿಂತಿರುವ ಹಾಗೆ ಅವರನ್ನು ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಗೋತ್ರಗಳೊಳಗಿಂದ ಆಯ್ದುಕೊಂಡಿದ್ದಾರೆ.</verse>
				<verse number="6">ಒಬ್ಬ ಲೇವಿಯು ಸಮಸ್ತ ಇಸ್ರಾಯೇಲಿನಲ್ಲಿರುವ ಯಾವುದೇ ಊರಿನಲ್ಲಿ ಇಳಿದುಕೊಂಡಿರುವ ಸ್ಥಳದಿಂದ ತನ್ನ ಮನಸ್ಸಿನ ಪೂರ್ಣಾಪೇಕ್ಷೆಯೊಂದಿಗೆ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳಕ್ಕೆ ಬರಬಹುದು.</verse>
				<verse number="7">ಅಲ್ಲಿ ಯೆಹೋವ ದೇವರ ಮುಂದೆ ನಿಂತುಕೊಳ್ಳುವ ಇತರ ಲೇವಿಯರಂತೆ ಅವನೂ ತನ್ನ ದೇವರಾದ ಯೆಹೋವ ದೇವರ ಹೆಸರಿನಲ್ಲಿ ಸೇವೆಮಾಡಬಹುದು.</verse>
				<verse number="8">ಅವನು ಪಿತ್ರಾರ್ಜಿತ ಆಸ್ತಿಯನ್ನು ಮಾರಿದ್ದರಲ್ಲಿ ಹಣದ ಪಾಲನ್ನು ಸ್ವೀಕರಿಸಿದ್ದರೂ, ಮಿಕ್ಕ ಲೇವಿಯರೊಡನೆ ಸಮಾನ ಪಾಲು ಹೊಂದಬೇಕು.</verse>
				<verse number="9">ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಬಂದಾಗ, ಆ ಜನಾಂಗಗಳು ಮಾಡುವ ಅಸಹ್ಯ ಕಾರ್ಯಗಳನ್ನು ನೀವು ಕಲಿಯಬಾರದು.</verse>
				<verse number="10">ತನ್ನ ಮಗನನ್ನು ಇಲ್ಲವೆ ಮಗಳನ್ನು ಆಹುತಿ ಕೊಡುವವನೂ, ಕಣಿ ಹೇಳುವವನೂ, ಶಕುನ ನೋಡುವವನೂ, ಸರ್ಪ ಮಂತ್ರದವನೂ, ಮಾಟಗಾರನೂ,</verse>
				<verse number="11">ಗಾರುಡಿಗಾರನೂ, ಯಕ್ಷಿಣಿಗಾರನೂ, ಮಂತ್ರಗಾರನೂ, ಸತ್ತವರ ಹತ್ತಿರ ವಿಚಾರಿಸುವವನೂ ನಿಮ್ಮಲ್ಲಿ ಇರಬಾರದು.</verse>
				<verse number="12">ಏಕೆಂದರೆ ಇಂಥವುಗಳನ್ನು ಮಾಡುವವರೆಲ್ಲಾ ಯೆಹೋವ ದೇವರಿಗೆ ಅಸಹ್ಯರಾಗಿದ್ದಾರೆ. ಈ ಅಸಹ್ಯಗಳ ನಿಮಿತ್ತವೇ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಮುಂದೆ ಹೊರದೂಡಿಸಿಬಿಡುತ್ತಾರೆ.</verse>
				<verse number="13">ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನಿರ್ದೋಷಿಯಾಗಿರಬೇಕು.</verse>
				<verse number="14">ನೀವು ಸ್ವಾಧೀನಪಡಿಸಿಕೊಳ್ಳುವ ಆ ಜನಾಂಗಗಳು ಶಕುನ ನೋಡುವವರ ಹಾಗೂ ಕಣಿಹೇಳುವವರ ಮಾತನ್ನು ಕೇಳುತ್ತಿದ್ದರು. ನಿಮ್ಮನ್ನಾದರೋ ನಿಮ್ಮ ದೇವರಾದ ಯೆಹೋವ ದೇವರು ಹಾಗೆ ಮಾಡಲು ಅನುಮತಿಸಲಿಲ್ಲ.</verse>
				<verse number="15">ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಿಮ್ಮ ಸಹೋದರರ ನಡುವೆಯಿಂದ ಎಬ್ಬಿಸುವರು. ಆ ಪ್ರವಾದಿಯ ಮಾತನ್ನು ನೀವು ಕೇಳಬೇಕು.</verse>
				<verse number="16">ನೀವು ಹೋರೇಬಿನಲ್ಲಿ ಸಭೆಕೂಡಿದ ದಿನದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಂದ ಬೇಡಿಕೊಂಡ ಪ್ರಕಾರ ಆಗುವುದು. ಆಗ ನೀವು, “ನಾವು ಸಾಯದಂತೆ ಇನ್ನು ಮೇಲೆ ನಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ನಾವು ಕೇಳುವುದಿಲ್ಲ, ಈ ದೊಡ್ಡ ಬೆಂಕಿಯನ್ನೂ ನೋಡುವುದಿಲ್ಲ,” ಎಂದು ಹೇಳಿದಿರಿ.</verse>
				<verse number="17">ಆಗ ಯೆಹೋವ ದೇವರು ನನಗೆ, “ಅವರು ಹೇಳಿದ್ದು ಸರಿಯಾಗಿದೆ.</verse>
				<verse number="18">ನಿನ್ನ ಹಾಗಿರುವ ಪ್ರವಾದಿಯನ್ನು ನಾನು ಅವರ ಸಹೋದರರ ಮಧ್ಯದಿಂದ ಅವರಿಗೆ ಎಬ್ಬಿಸುವೆನು; ನನ್ನ ವಾಕ್ಯಗಳನ್ನು ಆತನ ಬಾಯಿಯಲ್ಲಿ ಇಡುವೆನು. ನಾನು ಆತನಿಗೆ ಆಜ್ಞಾಪಿಸುವುದನ್ನೆಲ್ಲಾ ಆತನು ಅವರಿಗೆ ಹೇಳುವನು.</verse>
				<verse number="19">ಆ ಪ್ರವಾದಿ ನನ್ನ ಹೆಸರಿನಿಂದ ಹೇಳುವ ನನ್ನ ವಾಕ್ಯಗಳನ್ನು ಕೇಳದ ಮನುಷ್ಯನು ಯಾವನೋ ಅವನನ್ನು ನಾನು ವಿಚಾರಿಸುವೆನು.</verse>
				<verse number="20">ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವುದನ್ನು ನನ್ನ ಹೆಸರಿನಿಂದ ಮಾತನಾಡುವ ಪ್ರವಾದಿಯೂ, ಬೇರೆ ದೇವರುಗಳ ಹೆಸರಿನಿಂದ ಮಾತನಾಡುವ ಪ್ರವಾದಿಯೂ ಸಾಯಬೇಕು.”</verse>
				<verse number="21">ಇದಲ್ಲದೆ ನೀವು, “ಇದು ಯೆಹೋವ ದೇವರು ಹೇಳಿದ ವಾಕ್ಯವು ಅಲ್ಲ ಎಂದು ನಾವು ತಿಳಿದುಕೊಳ್ಳುವುದು ಹೇಗೆ?” ಎಂದು ನೀವು ನಿಮ್ಮ ಹೃದಯದಲ್ಲಿ ಆಲೋಚಿಸಬಹುದು.</verse>
				<verse number="22">ಒಬ್ಬ ಪ್ರವಾದಿಯು ಯೆಹೋವ ದೇವರ ಹೆಸರಿನಲ್ಲಿ ಮುಂತಿಳಿಸಿದ ಮಾತು ಸಂಭವಿಸದೆ ಹೋದರೆ ಅಥವಾ ನಿಜವಾಗದಿದ್ದರೆ, ಅದು ಯೆಹೋವ ದೇವರ ಮಾತು ಅಲ್ಲವೆಂದು ನೀವು ತಿಳಿದುಕೊಳ್ಳಬೇಕು. ಆ ಪ್ರವಾದಿಯು ಅಹಂಕಾರದಿಂದ ಅದನ್ನು ಮಾತನಾಡಿದ್ದರೆ, ಆದ್ದರಿಂದ ನೀವು ಅವನಿಗೆ ಭಯಪಡಬಾರದು.</verse>
			</chapter>
			<chapter number="19">
				<verse number="1">ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶದ ಜನಾಂಗಗಳನ್ನು ದೇವರು ತೆಗೆದುಹಾಕಿದ ತರುವಾಯ, ನೀವು ದೇಶವನ್ನು ಸ್ವಾಧೀನಮಾಡಿಕೊಂಡು ಅದರ ಪಟ್ಟಣಗಳಲ್ಲಿಯೂ ಮನೆಗಳಲ್ಲಿಯೂ ವಾಸಮಾಡುವಿರಿ.</verse>
				<verse number="2">ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಮಾಡಿಕೊಳ್ಳುವುದಕ್ಕೆ ಕೊಡುವ ನಿಮ್ಮ ದೇಶದ ಮಧ್ಯದಲ್ಲಿ ಮೂರು ಪಟ್ಟಣಗಳನ್ನು ನಿಮಗಾಗಿ ಪ್ರತ್ಯೇಕಿಸಬೇಕು.</verse>
				<verse number="3">ಕೈತಪ್ಪಿ ಕೊಲೆ ಮಾಡುವವರೆಲ್ಲರೂ ಅಲ್ಲಿಗೆ ಓಡಿಹೋಗುವುದಕ್ಕೆ ಅನುಕೂಲವಾಗುವಂತೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದ ಮೇರೆಯನ್ನು ಮೂರು ಭಾಗಮಾಡಿ, ಅವುಗಳ ಮಾರ್ಗವನ್ನು ಸಿದ್ಧಮಾಡಿಕೊಳ್ಳಬೇಕು.</verse>
				<verse number="4">ಬದುಕಿ ಉಳಿಯಲು ಅಲ್ಲಿ ಓಡಿಹೋಗತಕ್ಕ ಕೊಲೆಪಾತಕನ ವಿವರವೇನೆಂದರೆ, ತಿಳಿಯದೆ ಇಲ್ಲವೆ ಪೂರ್ವ ಕಲ್ಪಿತ ಹಗೆ ಮಾಡದೆ, ತನ್ನ ನೆರೆಯವನನ್ನು ಹೊಡೆದವನೇ.</verse>
				<verse number="5">ಉದಾಹರಣೆಗೆ: ಒಬ್ಬ ವ್ಯಕ್ತಿ ಕಟ್ಟಿಗೆಯನ್ನು ಕಡಿಯಲು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋದನೆಂದು ಇಟ್ಟುಕೊಳ್ಳೋಣ. ಅಲ್ಲಿ ಒಂದು ಮರವನ್ನು ಕೊಡಲಿಯಿಂದ ಹೊಡೆಯುತ್ತಿರುವಾಗ, ಕೊಡಲಿ ಕಾವಿನಿಂದ ಜಾರಿ, ಆ ಮತ್ತೊಬ್ಬನಿಗೆ ತಗಲಿ ಅವನು ಸತ್ತರೆ, ಹೊಡೆದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.</verse>
				<verse number="6">ಸತ್ತವನಲ್ಲಿ ಅವನಿಗೆ ಮೊದಲಿನಿಂದಲೂ ದ್ವೇಷವಿರಲಿಲ್ಲ. ಆದ್ದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲ. ಆದರೂ ಹತ್ಯೆ ಮಾಡಿದವನಿಗೆ ಮುಯ್ಯಿ ತೀರಿಸುವ ಹಂಗುಳ್ಳ ಸಮೀಪ ಬಂಧು ಕೋಪದಿಂದ ಉರಿಯುತ್ತಾ, ಅವನನ್ನು ಹಿಂದಟ್ಟಬಹುದು. ಮಾರ್ಗದ ಮಧ್ಯದಲ್ಲೇ ಅವನನ್ನು ಹಿಡಿದು ಕೊಂದು ಹಾಕಬಹುದು.</verse>
				<verse number="7">ಈ ಕಾರಣದಿಂದಲೇ ನೀವು ಆ ಮೂರು ಆಶ್ರಯಪಟ್ಟಣಗಳನ್ನು ಗೊತ್ತು ಮಾಡಬೇಕೆಂದು ಆಜ್ಞಾಪಿಸಿದ್ದೇನೆ.</verse>
				<verse number="8">ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದಂತೆ ನಿಮ್ಮ ಮೇರೆಯನ್ನು ವಿಸ್ತಾರಮಾಡಿ, ನಿಮ್ಮ ಪಿತೃಗಳಿಗೆ ಕೊಡುವುದಾಗಿ ಹೇಳಿದ ದೇಶವನ್ನೆಲ್ಲಾ ನಿಮಗೆ ಕೊಡುವರು.</verse>
				<verse number="9">ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಆಜ್ಞೆಯನ್ನೆಲ್ಲಾ ನೀವು ಕಾಪಾಡಿ ಕೈಗೊಳ್ಳಬೇಕು. ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾರ್ಗಗಳಲ್ಲಿ ಯಾವಾಗಲೂ ನಡೆದರೆ ನೀವು ಈ ಮೂರು ಪಟ್ಟಣಗಳ ಜೊತೆಗೆ ಇನ್ನೂ ಮೂರು ಪಟ್ಟಣಗಳನ್ನು ಕೂಡಿಸಬೇಕು.</verse>
				<verse number="10">ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗಬಾರದು, ಅಂಥವನಿಗೆ ಮರಣಶಿಕ್ಷೆಯಾದರೆ ಆ ರಕ್ತಾಪರಾಧ ನಿಮ್ಮದಾಗಿಯೇ ಇರುವುದು.</verse>
				<verse number="11">ಆದರೆ ಒಬ್ಬನು ತನ್ನ ನೆರೆಯವನನ್ನು ದ್ವೇಷಿಸಿ ಹೊಂಚು ಹಾಕಿ, ಅವನಿಗೆ ವಿರೋಧವಾಗಿ ಎದ್ದು, ಅವನನ್ನು ಸಾಯುವವರೆಗೂ ಹೊಡೆದು ಕೊಂದುಹಾಕಿ ಈ ಪಟ್ಟಣಗಳಿಗೆ ಓಡಿಹೋದರೆ,</verse>
				<verse number="12">ಆ ಪಟ್ಟಣದ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ, ಅವನಿಗೆ ಮರಣದಂಡನೆಯಾಗುವಂತೆ ಸೇಡು ತೀರಿಸಿಕೊಳ್ಳುವವನ ಕೈಗೆ ಅವನನ್ನು ಒಪ್ಪಿಸಬೇಕು.</verse>
				<verse number="13">ನೀವು ಅವನ ಮೇಲೆ ದಯೆ ತೋರಬಾರದು. ನಿಮಗೆ ಒಳ್ಳೆಯದಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನು ಇಸ್ರಾಯೇಲರಲ್ಲಿ ಉಳಿಯದಂತೆ ತೆಗೆದುಹಾಕಬೇಕು.</verse>
				<verse number="14">ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವಾಧೀನಮಾಡಿಕೊಳ್ಳುವುದಕ್ಕೆ ಕೊಡುವ ದೇಶದೊಳಗೆ ನೀವು ಹೊಂದುವ ಸೊತ್ತಿನಲ್ಲಿ ಹಿರಿಯರು ಇಟ್ಟಂಥ ನಿಮ್ಮ ನೆರೆಯವನ ಮೇರೆಯನ್ನು ಸರಿಸಬಾರದು.</verse>
				<verse number="15">ಯಾವ ಅಕ್ರಮದ ನಿಮಿತ್ತವೂ, ಅಥವಾ ಪಾಪದ ನಿಮಿತ್ತವೂ ಒಬ್ಬ ಮನುಷ್ಯನಿಗೆ ವಿರೋಧವಾಗಿ ಒಬ್ಬ ಸಾಕ್ಷಿ ನಿಂತುಕೊಳ್ಳಬಾರದು. ಇಬ್ಬರು ಸಾಕ್ಷಿಗಳ ಇಲ್ಲವೆ ಮೂವರು ಸಾಕ್ಷಿಗಳ ಮಾತಿನಿಂದ ವಿಷಯವು ಸ್ಥಿರವಾಗುವುದು.</verse>
				<verse number="16">ಸುಳ್ಳುಸಾಕ್ಷಿಯವನು ಒಬ್ಬ ಮನುಷ್ಯನ ಮೇಲೆ ಅವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಕೊಡುವುದಕ್ಕೆ ಎದ್ದರೆ,</verse>
				<verse number="17">ವ್ಯಾಜ್ಯವಾಡುವ ಆ ಇಬ್ಬರು ಮನುಷ್ಯರು ಯೆಹೋವ ದೇವರ ಮುಂದೆಯೂ ಆ ದಿನಗಳಲ್ಲಿರುವ ಯಾಜಕರ ಹಾಗು ನ್ಯಾಯಾಧಿಪತಿಗಳ ಮುಂದೆಯೂ ನಿಂತುಕೊಳ್ಳಬೇಕು.</verse>
				<verse number="18">ನ್ಯಾಯಾಧಿಪತಿಗಳು ಕೂಲಂಕಷವಾಗಿ ವಿಚಾರಣೆ ಮಾಡಬೇಕು. ಆಗ ಇಗೋ, ಆ ಸಾಕ್ಷಿಯು ಸುಳ್ಳುಸಾಕ್ಷಿಯಾಗಿದ್ದರೆ, ಅಂದರೆ ಅವನು ತನ್ನ ಸಹೋದರನ ಮೇಲೆ ಸುಳ್ಳು ಹೇಳಿದ್ದರೆ,</verse>
				<verse number="19">ಅವನು ತನ್ನ ಸಹೋದರನಿಗೆ ಮಾಡುವುದಕ್ಕೆ ಯೋಚಿಸಿದ ಪ್ರಕಾರವೇ ಅವನಿಗೆ ಶಿಕ್ಷೆ ಕೊಡಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.</verse>
				<verse number="20">ಆಗ ಉಳಿದವರು ಕೇಳಿ ಭಯಪಟ್ಟು, ಆ ದುಷ್ಟಕೃತ್ಯವನ್ನು ಇನ್ನು ಮುಂದೆ ನಿಮ್ಮ ಮಧ್ಯದಲ್ಲಿ ಮಾಡದಿರುವರು.</verse>
				<verse number="21">ನೀವು ಅಂಥವರಿಗೆ ಕರುಣೆ ತೋರಿಸಬಾರದು, ಪ್ರಾಣಕ್ಕೆ ಪ್ರತಿಯಾಗಿ ಪ್ರಾಣ, ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಪ್ರತಿಯಾಗಿ ಕಾಲನ್ನು ಅವನಿಂದ ತೆಗೆದುಬಿಡಬೇಕು.</verse>
			</chapter>
			<chapter number="20">
				<verse number="1">ನೀವು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟಾಗ ಅವರ ಕುದುರೆಗಳನ್ನೂ ರಥಗಳನ್ನೂ ನಿಮಗಿಂತ ಹೆಚ್ಚಾಗಿರುವ ಜನರನ್ನೂ ನೋಡಿದರೆ ಭಯಪಡಬೇಡಿರಿ. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ.</verse>
				<verse number="2">ನೀವು ಯುದ್ಧಕ್ಕೆ ಸಮೀಪ ಬಂದಾಗ, ಯಾಜಕನು ಹತ್ತಿರ ಬಂದು, ಯೋಧರ ಸಂಗಡ ಮಾತನಾಡಿ ಅವರಿಗೆ,</verse>
				<verse number="3">“ಇಸ್ರಾಯೇಲರೇ ಕೇಳಿರಿ, ನೀವು ಈ ಹೊತ್ತು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಸಮೀಪ ಬಂದಿದ್ದೀರಿ. ನಿಮ್ಮ ಹೃದಯಗಳು ಕುಗ್ಗಬಾರದು. ನೀವು ಭಯಪಡಬೇಡಿರಿ, ನಡುಗಬೇಡಿರಿ, ಅವರಿಗೆ ಹೆದರಲೂ ಬೇಡಿರಿ.</verse>
				<verse number="4">ಏಕೆಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ, ನಿಮ್ಮನ್ನು ರಕ್ಷಿಸುವುದಕ್ಕೆ ನಿಮ್ಮ ದೇವರಾದ ಯೆಹೋವ ದೇವರೇ ನಿಮ್ಮ ಸಂಗಡ ಬರುತ್ತಾರೆ,” ಎಂದು ಹೇಳಬೇಕು.</verse>
				<verse number="5">ಮತ್ತು ಅಧಿಕಾರಿಗಳು ಅವರಿಗೆ ಹೀಗೆ ಹೇಳಬೇಕು, “ನಿಮ್ಮಲ್ಲಿ ಯಾವನಾದರು ಹೊಸ ಮನೆಯನ್ನು ಕಟ್ಟಿ, ಗೃಹ ಪ್ರತಿಷ್ಠೆ ಇನ್ನು ಮಾಡದಿದ್ದರೆ, ಅವನು ತನ್ನ ಮನೆಗೆ ಹೋಗಲಿ. ಯುದ್ಧದಲ್ಲಿ ಸತ್ತರೆ ಬೇರೊಬ್ಬನು ಆ ಮನೆಯನ್ನು ಸೇರಿಕೊಂಡಾನು.</verse>
				<verse number="6">ದ್ರಾಕ್ಷಿತೋಟವನ್ನು ನೆಟ್ಟು ಅದರ ಫಲವನ್ನು ತಿನ್ನದೇ ಇರುವ ಮನುಷ್ಯನು, ತನ್ನ ಮನೆಗೆ ಹೋಗಲಿ. ಅವನು ಯುದ್ಧದಲ್ಲಿ ಸತ್ತರೆ ಬೇರೊಬ್ಬನು ಆ ಫಲ ತಿಂದಾನು.</verse>
				<verse number="7">ಯಾವನಾದರೂ ಮದುವೆ ಮಾಡಿಕೊಂಡಿದ್ದು, ತನ್ನ ಹೆಂಡತಿಯೊಂದಿಗೆ ಸಂಸಾರ ಮಾಡಿರದಿದ್ದರೆ, ಅಂಥವನು ಮನೆಗೆ ಹೋಗಲಿ. ಅವನು ಯುದ್ಧದಲ್ಲಿ ಸತ್ತರೆ, ಬೇರೊಬ್ಬನು ಆಕೆಯನ್ನು ಸೇರಿಸಿಕೊಂಡಾನು.”</verse>
				<verse number="8">ಇದಲ್ಲದೆ ಅಧಿಕಾರಿಗಳು ಮಾತನಾಡಿ, “ಯಾವನಾದರೂ ಯುದ್ಧಕ್ಕೆ ಭಯಪಟ್ಟು ಅಂಜಿಕೊಂಡರೆ, ಅಂಥವನು ಮನೆಗೆ ಹೋಗಲಿ. ಅವನನ್ನು ನೋಡಿ ಬೇರೆಯವರೂ ಹೆದರಿಕೊಳ್ಳುವ ಅವಕಾಶವಿದೆ,” ಎಂದು ಹೇಳಬೇಕು.</verse>
				<verse number="9">ಅಧಿಕಾರಿಗಳು ಯೋಧರ ಸಂಗಡ ಮಾತನಾಡಿ ಮುಗಿಸಿದಾಗ, ಅವರು ಅದರ ಮೇಲೆ ಸೇನಾಧಿಪತಿಗಳನ್ನು ನೇಮಿಸಬೇಕು.</verse>
				<verse number="10">ನೀವು ಯುದ್ಧಮಾಡುವುದಕ್ಕಾಗಿ ಒಂದು ಪಟ್ಟಣದ ಹತ್ತಿರ ಬಂದಾಗ, ಮೊದಲು ಅದನ್ನು ಸಮಾಧಾನಕ್ಕಾಗಿ ಕರೆಯಬೇಕು.</verse>
				<verse number="11">ಆ ಪಟ್ಟಣವು ನಿಮಗೆ ಸಮಾಧಾನದ ಉತ್ತರಕೊಟ್ಟು ಬಾಗಿಲನ್ನು ತೆರೆದರೆ, ಅದರಲ್ಲಿರುವ ಜನರೆಲ್ಲರೂ ನಿಮಗೆ ಕಪ್ಪಕೊಟ್ಟು, ನಿಮಗಾಗಿ ಕೆಲಸ ಮಾಡಬೇಕು.</verse>
				<verse number="12">ಅವರು ನಿಮ್ಮ ಮಾತಿಗೆ ಸಮ್ಮತಿಸದೆ ನಿಮ್ಮ ಸಂಗಡ ಯುದ್ಧಮಾಡಿದರೆ, ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು.</verse>
				<verse number="13">ನಿಮ್ಮ ದೇವರಾದ ಯೆಹೋವ ದೇವರು ಅದನ್ನು ನಿಮ್ಮ ಕೈಗೆ ಕೊಟ್ಟಾಗ, ಅದರ ಗಂಡಸರೆಲ್ಲರನ್ನು ಸಂಹಾರಮಾಡಬೇಕು.</verse>
				<verse number="14">ಆದರೆ ಸ್ತ್ರೀಯರನ್ನೂ ಚಿಕ್ಕವರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲಾ ಆಸ್ತಿಯನ್ನೂ ನಿಮಗಾಗಿ ತಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವಂಥ ನಿಮ್ಮ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.</verse>
				<verse number="15">ಹೀಗೆ ಈ ದೇಶದ ಜನಾಂಗಗಳಿಗೆ ಸೇರದೆ ನಿಮಗೆ ದೂರವಾಗಿರುವ ಜನಾಂಗಗಳ ಪಟ್ಟಣಗಳಿಗೆಲ್ಲಾ ಹಾಗೆಯೇ ಮಾಡಬೇಕು.</verse>
				<verse number="16">ಆದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಈ ಜನರ ಪಟ್ಟಣಗಳಲ್ಲಿ ಉಸಿರಾಡುವ ಯಾವುದನ್ನಾದರೂ ಉಳಿಸಬಾರದು.</verse>
				<verse number="17">ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದಂತೆ ಹಿತ್ತಿಯರನ್ನೂ, ಅಮೋರಿಯರನ್ನೂ, ಕಾನಾನ್ಯರನ್ನೂ, ಪೆರಿಜೀಯರನ್ನೂ, ಹಿವ್ವಿಯರನ್ನೂ, ಯೆಬೂಸಿಯರನ್ನೂ ಪೂರ್ಣವಾಗಿ ದಂಡಿಸಬೇಕು.</verse>
				<verse number="18">ಇಲ್ಲವಾದರೆ ಅವರು ತಮ್ಮ ದೇವರುಗಳನ್ನು ಆರಾಧಿಸುವಾಗ ಮಾಡಿದ ಎಲ್ಲಾ ಅಸಹ್ಯಕರವಾದ ಆಚಾರಗಳನ್ನು ನಿಮಗೆ ಕಲಿಸಿಕೊಡಬಹುದು ಮತ್ತು ನೀವು ನಿಮ್ಮ ದೇವರಾದ ಯೆಹೋವ ದೇವರಿಗೆ ದ್ರೋಹಿಗಳಾಗಬಹುದು.</verse>
				<verse number="19">ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳಲು ಅದಕ್ಕೆ ಬಹು ದಿವಸ ಮುತ್ತಿಗೆ ಹಾಕಬೇಕಾಗಬಹುದು. ಆಗ ಅದಕ್ಕೆ ಸೇರಿದ ಮರಗಳನ್ನು ಹಾಳುಮಾಡಬಾರದು. ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಶತ್ರುಗಳೇನು? ಅವುಗಳೊಡನೆ ಯುದ್ಧ ಮಾಡಬಹುದೇ?</verse>
				<verse number="20">ತಿನ್ನತಕ್ಕ ಹಣ್ಣು ಕೊಡುವುದಿಲ್ಲ ಎಂದು ನೀವು ತಿಳಿದ ಮರಗಳನ್ನು ಮಾತ್ರ ಕಡಿದು ಹಾಕಬಹುದು. ಅವುಗಳಿಂದ ಯುದ್ಧ ಯಂತ್ರಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣ ಬೀಳುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.</verse>
			</chapter>
			<chapter number="21">
				<verse number="1">ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ಹತನಾದ ಒಬ್ಬ ವ್ಯಕ್ತಿಯ ಶವವು ಹೊಲದಲ್ಲಿ ಬಿದ್ದಿರುವುದನ್ನು ನೀವು ಕಂಡಾಗ ಮತ್ತು ಅವನನ್ನು ಯಾರು ಹೊಡೆದರೆಂದು ತಿಳಿಯದೆ ಹೋದರೆ,</verse>
				<verse number="2">ನಿಮ್ಮ ಹಿರಿಯರೂ ನ್ಯಾಯಾಧಿಪತಿಗಳೂ ಹೊರಗೆ ಹೋಗಿ, ಆ ಹತನಾದವನ ಸುತ್ತಲಿರುವ ಪಟ್ಟಣಗಳಲ್ಲಿ ಯಾವುದು ಹತ್ತಿರವೆಂದು ತಿಳಿದುಕೊಳ್ಳಲು ಅಳತೆಮಾಡಬೇಕು.</verse>
				<verse number="3">ಹತನಾದವನಿಗೆ ಸಮೀಪವಾದ ಊರು ಯಾವುದೋ, ಆ ಊರಿನ ಹಿರಿಯರು ಇನ್ನೂ ಕೆಲಸ ಮಾಡದಂಥ, ನೊಗ ಎಳೆಯದಂಥ, ಒಂದು ಕಡಸನ್ನು ತೆಗೆದುಕೊಳ್ಳಬೇಕು.</verse>
				<verse number="4">ಆಮೇಲೆ ಆ ಊರಿನ ಹಿರಿಯರು ಆ ಕಡಸನ್ನು ನಿತ್ಯ ಹರಿಯುವ ಹಳ್ಳದ ಬಳಿಗೆ ಬೇಸಾಯವಾಗದಂಥ, ಬೀಜ ಹಾಕದಂಥ ಸ್ಥಳಕ್ಕೆ ತೆಗೆದುಕೊಂಡುಹೋಗಿ, ಅಲ್ಲಿ ಹಳ್ಳದಲ್ಲಿ ಕಡಸನ್ನು ವಧಿಸಬೇಕು.</verse>
				<verse number="5">ಲೇವಿಯ ಪುತ್ರರಾದ ಯಾಜಕರು ಹತ್ತಿರ ಇರಬೇಕು. ಏಕೆಂದರೆ ಅವರನ್ನೇ ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಸೇವೆ ಮಾಡುವುದಕ್ಕೂ ಯೆಹೋವ ದೇವರ ಹೆಸರಿನಲ್ಲಿ ಆಶೀರ್ವಾದ ಕೊಡುವುದಕ್ಕೂ ಎಲ್ಲಾ ವಿವಾದ ಹೊಡೆದಾಟಗಳ ವಿಷಯದಲ್ಲಿ ತೀರ್ಮಾನಿಸುವುದಕ್ಕೂ ಆಯ್ದುಕೊಂಡಿದ್ದಾರೆ.</verse>
				<verse number="6">ಆಮೇಲೆ ಹತನಾದವನ ಶವಕ್ಕೆ ಸಮೀಪವಾಗಿರುವ ಆ ಊರಿನ ಹಿರಿಯರೆಲ್ಲರೂ ತಗ್ಗಿನಲ್ಲಿ ವಧಿಸಿದ ಕಡಸಿನ ಮೇಲೆ ಕೈಗಳನ್ನು ತೊಳೆದುಕೊಳ್ಳಬೇಕು.</verse>
				<verse number="7">ಅನಂತರ, “ನಮ್ಮ ಕೈಗಳು ಈ ರಕ್ತವನ್ನು ಚೆಲ್ಲಲಿಲ್ಲ. ನಮ್ಮ ಕಣ್ಣುಗಳು ನಡೆದದ್ದನ್ನು ನೋಡಲಿಲ್ಲ.</verse>
				<verse number="8">ಯೆಹೋವ ದೇವರೇ, ನೀವು ವಿಮೋಚಿಸಿದ ನಿಮ್ಮ ಜನರಾದ ಇಸ್ರಾಯೇಲರಿಗೆ ಕರುಣೆ ಹೊದಿಸಿರಿ. ನಿಮ್ಮ ಜನರಾದ ಇಸ್ರಾಯೇಲರ ಮೇಲೆ ನಿರ್ದೋಷವಾದ ರಕ್ತಾಪರಾಧವನ್ನು ಹೊರಿಸಬೇಡಿರಿ,” ಎಂದು ಹೇಳಬೇಕು. ಆ ರಕ್ತಾಪರಾಧವು ಅವರಿಗೆ ಮುಚ್ಚಲಾಗುವುದು.</verse>
				<verse number="9">ಈ ಪ್ರಕಾರ ನೀವು ಯೆಹೋವ ದೇವರ ಮುಂದೆ ಸರಿಯಾದದ್ದನ್ನು ಮಾಡಿದರೆ, ರಕ್ತಾಪರಾಧವನ್ನು ನಿಮ್ಮಲ್ಲಿಂದ ತೆಗೆದುಹಾಕುವಿರಿ.</verse>
				<verse number="10">ನೀವು ಶತ್ರುಗಳ ವಿರುದ್ಧ ಯುದ್ಧಮಾಡಿ, ನಿಮ್ಮ ದೇವರಾದ ಯೆಹೋವ ದೇವರಿಂದ, ನೀವು ಅವರನ್ನು ಸೋಲಿಸಿದರೆ,</verse>
				<verse number="11">ಸೆರೆ ಹಿಡಿದವರಲ್ಲಿ ಒಬ್ಬ ಸುಂದರ ಸ್ತ್ರೀಯನ್ನು ನಿಮ್ಮಲ್ಲಿ ಯಾರಾದರೂ ಕಂಡು ಇಷ್ಟಪಟ್ಟರೆ, ಅವಳನ್ನು ಮದುವೆ ಮಾಡಿಕೊಳ್ಳಬಹುದು.</verse>
				<verse number="12">ಅವಳು ತಲೆ ಕ್ಷೌರಮಾಡಿಸಿಕೊಂಡು, ಉಗುರುಗಳನ್ನು ಕತ್ತರಿಸಿಕೊಂಡು,</verse>
				<verse number="13">ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು, ಅವನ ಮನೆಯಲ್ಲಿ ಒಂದು ತಿಂಗಳವರೆಗೆ ತನ್ನ ತಾಯಿ ತಂದೆಯರನ್ನು ಸ್ಮರಿಸಿ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು.</verse>
				<verse number="14">ತರುವಾಯ ಅವಳು ಅವನಿಗೆ ಇಷ್ಟವಾಗದೆ ಹೋದರೆ, ಅವನು ಅವಳನ್ನು ಅವಳು ಬಯಸಿದ ಸ್ಥಳಕ್ಕೆ ಕಳುಹಿಸಿಬಿಡಬೇಕು. ಅವಳನ್ನು ಅವಮಾನಪಡಿಸಿದ್ದರಿಂದ ದಾಸತ್ವಕ್ಕೆ ಮಾರಲೂಬಾರದು, ದಾಸಿಯಂತೆ ನಡೆಸಲೂಬಾರದು.</verse>
				<verse number="15">ಒಬ್ಬ ಮನುಷ್ಯನಿಗೆ ಇಬ್ಬರು ಹೆಂಡತಿಯರಿದ್ದು, ಒಬ್ಬಳನ್ನು ಪ್ರೀತಿಸುತ್ತಲೂ, ಮತ್ತೊಬ್ಬಳನ್ನು ದ್ವೇಷಿಸುತ್ತಲೂ ಇದ್ದರೆ, ಅವರಿಬ್ಬರೂ ಅವನಿಗೆ ಮಕ್ಕಳನ್ನು ಹೆತ್ತಿರುವಲ್ಲಿ, ಚೊಚ್ಚಲು ಮಗನು ತಿರಸ್ಕಾರ ಹೊಂದುತ್ತಿರುವ ಹೆಂಡತಿಯಲ್ಲಿಯೇ ಹುಟ್ಟಿದ್ದರೆ,</verse>
				<verse number="16">ಅವನು ತನ್ನ ಪುತ್ರರಿಗೆ ತನ್ನ ಆಸ್ತಿಯನ್ನು ಹಂಚಿ ಕೊಡುವಾಗ, ತಾನು ಪ್ರೀತಿಮಾಡದ ಹೆಂಡತಿಯ ಚೊಚ್ಚಲ ಮಗನಿಗೆ ಬದಲಾಗಿ ಅವನು ಪ್ರೀತಿಸುವವಳ ಮಗನನ್ನು ಹಿರಿಯನೆಂದು ಮಾಡಕೂಡದು.</verse>
				<verse number="17">ಅವನು ಪ್ರೀತಿಮಾಡದವಳ ಮಗನಿಗೆ ತನ್ನ ಬಳಿಯಲ್ಲಿರುವ ಎಲ್ಲವುಗಳಲ್ಲಿ ಎರಡು ಪಾಲುಗಳನ್ನು ಕೊಟ್ಟು, ಅವನೇ ಜೇಷ್ಠ ಪುತ್ರನೆಂದು ಒಪ್ಪಿಕೊಳ್ಳಬೇಕು. ಏಕೆಂದರೆ ಅವನೇ ಅವನ ಪ್ರಥಮ ಫಲ. ಅವನಿಗೆ ಜೇಷ್ಠ ಪುತ್ರನ ಹಕ್ಕು ಉಂಟು.</verse>
				<verse number="18">ಒಬ್ಬ ಮನುಷ್ಯನಿಗೆ ಮೊಂಡನೂ, ತಿರುಗಿ ಬೀಳುವವನೂ ಆದ ಮಗನಿದ್ದರೆ, ಅವನು ತಂದೆತಾಯಿಯ ಮಾತನ್ನೂ ಕೇಳದೆ, ಅವರು ಅವನನ್ನು ಶಿಸ್ತುಪಡಿಸಲು ಹೇಳುವ ಮಾತನ್ನೂ ಕೇಳದೆ ಹೋದರೆ,</verse>
				<verse number="19">ಅವನ ತಂದೆತಾಯಿಗಳು ಅವನನ್ನು ಹಿಡಿದು, ಪಟ್ಟಣದ ಹಿರಿಯರ ಬಳಿಗೂ ಅವನ ಊರಿನ ಬಾಗಿಲಿನ ಬಳಿಗೂ ತಂದು,</verse>
				<verse number="20">ಪಟ್ಟಣದ ಹಿರಿಯರಿಗೆ, “ಈ ನಮ್ಮ ಮಗನು ಮೊಂಡನೂ, ತಿರುಗಿ ಬೀಳುವವನೂ, ನಮ್ಮ ಮಾತು ಕೇಳದವನೂ, ಹೊಟ್ಟೆ ಬಾಕನೂ, ಕುಡುಕನೂ ಆಗಿದ್ದಾನೆ,” ಎಂದು ಹೇಳಬೇಕು.</verse>
				<verse number="21">ಆಗ ಅವನ ಪಟ್ಟಣದ ಜನರೆಲ್ಲರೂ ಅವನು ಸಾಯುವಂತೆ ಅವನ ಮೇಲೆ ಕಲ್ಲೆಸೆಯಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. ಇಸ್ರಾಯೇಲರಲ್ಲಿ ಇದನ್ನು ಕೇಳಿ ಭಯಪಡುವರು.</verse>
				<verse number="22">ಒಬ್ಬನು ಮರಣದಂಡನೆಗೆ ಯೋಗ್ಯವಾದ ಅಪರಾಧ ಮಾಡಿದ್ದರಿಂದ, ನೀವು ಅವನಿಗೆ ಮರಣದಂಡನೆಯನ್ನು ವಿಧಿಸಿ, ಅವನ ಶವವನ್ನು ಮರಕ್ಕೆ ತೂಗುಹಾಕಿದ್ದಾದರೆ,</verse>
				<verse number="23">ಅವನ ಶವ ರಾತ್ರಿಯಲ್ಲಿ ಮರದ ಮೇಲಿರಬಾರದು. ಅವನನ್ನು ಅದೇ ದಿವಸದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.</verse>
			</chapter>
			<chapter number="22">
				<verse number="1">ಸ್ವದೇಶದವನ ಎತ್ತಾಗಲಿ, ಕುರಿಯಾಗಲಿ ದಾರಿತಪ್ಪಿ ಹೋಗಿರುವುದನ್ನು ನೀವು ಕಂಡರೆ, ಕಾಣದವರಂತೆ ಅದನ್ನು ಬಿಟ್ಟುಹೋಗಬಾರದು. ಅವನ ಬಳಿಗೆ ಅಟ್ಟಿಕೊಂಡು ಹೋಗಿ ಕೊಡಲೇಬೇಕು.</verse>
				<verse number="2">ಅವನು ನಿಮಗೆ ದೂರ ಆಗಿದ್ದರೆ, ಇಲ್ಲವೆ ಅವನು ಯಾರು ಎಂದು ನಿಮಗೆ ತಿಳಿಯದೆ ಹೋದರೆ, ಆ ಪ್ರಾಣಿಯನ್ನು ನಿಮ್ಮ ಮನೆಗೆ ಹೊಡೆದುಕೊಂಡು ಬಂದು ಕಾಯಬೇಕು. ಅವನು ಅದನ್ನು ಹುಡುಕುತ್ತಾ ಬಂದಾಗ, ನೀವು ಅದನ್ನು ಅವನಿಗೆ ಮರಳಿ ಕೊಡಬೇಕು.</verse>
				<verse number="3">ಅವನ ಕತ್ತೆಯಾಗಲಿ, ಅವನ ವಸ್ತ್ರವಾಗಲಿ, ನಿನ್ನ ಸಹೋದರನು ಕಳೆದುಕೊಂಡ ಯಾವ ವಸ್ತುಗಳೇ ಆಗಲಿ ನೀನು ಕಂಡುಕೊಂಡರೆ, ಹಾಗೆಯೇ ಮಾಡಬೇಕು. ನೀನು ಕಾಣದವರಂತೆ ಇರಬಾರದು.</verse>
				<verse number="4">ನಿನ್ನ ಸಹೋದರನ ಕತ್ತೆಯಾಗಲಿ, ಎತ್ತಾಗಲಿ, ಮಾರ್ಗದಲ್ಲಿ ಬಿದ್ದಿರುವುದನ್ನು ನೋಡಿದರೆ ಅಲಕ್ಷ್ಯ ಮಾಡಬೇಡ. ಅದನ್ನು ಎಬ್ಬಿಸಲು ಅವನಿಗೆ ಸಹಾಯಮಾಡಬೇಕು.</verse>
				<verse number="5">ಸ್ತ್ರೀಯು ಪುರುಷನ ವಸ್ತ್ರ ಉಟ್ಟುಕೊಳ್ಳಬಾರದು, ಪುರುಷನು ಸ್ತ್ರೀ ವಸ್ತ್ರ ಹಾಕಿಕೊಳ್ಳಬಾರದು. ಏಕೆಂದರೆ ಹೀಗೆ ಮಾಡುವವರೆಲ್ಲ ಯೆಹೋವ ದೇವರಿಗೆ ಅಸಹ್ಯ.</verse>
				<verse number="6">ನೀನು ದಾರಿಯಲ್ಲಿ ಯಾವುದಾದರೊಂದು ಗಿಡದಲ್ಲಾಗಲಿ, ನೆಲದ ಮೇಲಾಗಲಿ, ನಿನಗೆ ಮರಿಗಳುಳ್ಳ ಇಲ್ಲವೆ ಮೊಟ್ಟೆಗಳುಳ್ಳ ಪಕ್ಷಿಯ ಗೂಡು ಸಿಕ್ಕಿದರೆ, ಮರಿಗಳ ಮೇಲೆಯಾಗಲಿ, ಮೊಟ್ಟೆಗಳ ಮೇಲೆಯಾಗಲಿ ತಾಯಿ ಕೂತುಕೊಂಡಿದ್ದರೆ, ಮರಿಗಳ ಸಂಗಡ ತಾಯಿಯನ್ನು ತೆಗೆದುಕೊಳ್ಳಬಾರದು.</verse>
				<verse number="7">ನಿನಗೆ ಒಳ್ಳೆಯದಾಗುವ ಹಾಗೆಯೂ ಬಹುಕಾಲ ಬಾಳುವ ಹಾಗೆಯೂ ಹೇಗಾದರೂ ತಾಯಿಯನ್ನು ಕಳುಹಿಸಿಬಿಟ್ಟು, ಮರಿಗಳನ್ನು ತೆಗೆದುಕೊಳ್ಳಬಹುದು.</verse>
				<verse number="8">ನೀನು ಹೊಸ ಮನೆಯನ್ನು ಕಟ್ಟಿದಾಗ, ಯಾರೂ ಅದರ ಮೇಲಿನಿಂದ ಬಿದ್ದು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಕೈಗೋಡೆಯನ್ನು ಕಟ್ಟಬೇಕು.</verse>
				<verse number="9">ನಿನ್ನ ದ್ರಾಕ್ಷಿತೋಟದಲ್ಲಿ ಎರಡು ತರವಾದ ಬೀಜ ಬಿತ್ತಬಾರದು; ಬಿತ್ತಿದರೆ ನೀನು ಬಿತ್ತಿದ ಬೀಜವೂ, ಬಿತ್ತಿದ ಬೀಜದ ಪೈರೂ, ದ್ರಾಕ್ಷಿತೋಟದ ಹುಟ್ಟುವಳಿಯೂ ಅಶುದ್ಧವಾಗುವುದು.</verse>
				<verse number="10">ಎತ್ತನ್ನೂ, ಕತ್ತೆಯನ್ನೂ ಜೊತೆ ಮಾಡಿ, ನೇಗಿಲಿಗೆ ಕಟ್ಟಬಾರದು.</verse>
				<verse number="11">ನಾರು ಮತ್ತು ಉಣ್ಣೆ ಎರಡೂ ಕೂಡಿರುವ ಬಟ್ಟೆಯನ್ನೂ ಧರಿಸಬಾರದು.</verse>
				<verse number="12">ನೀನು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಿಗೆ ಗೊಂಡೆಗಳನ್ನು ಮಾಡಿಸಿಕೊಳ್ಳಬೇಕು.</verse>
				<verse number="13">ಒಬ್ಬನು ತಾನು ಮದುವೆಮಾಡಿಕೊಂಡ ಹೆಂಡತಿಯನ್ನು ದ್ವೇಷಿಸಿ,</verse>
				<verse number="14">ಅವಳ ಬಗ್ಗೆ ಇಲ್ಲ ಸಲ್ಲದ ಮಾತುಗಳನ್ನು ಹೇಳಿ, “ನಾನು ಇವಳನ್ನು ಮದುವೆ ಮಾಡಿಕೊಂಡೆ, ಆದರೆ ಕೂಡಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು,” ಎಂದು ಹೇಳಿ ಅವಳ ಮೇಲೆ ಆಪಾದನೆ ತರಬಹುದು.</verse>
				<verse number="15">ಅವಳ ತಾಯಿ ತಂದೆಗಳು ತಮ್ಮ ಮಗಳು ವಿವಾಹಕ್ಕೆ ಮುಂಚೆ ಪುರುಷ ಸಂಪರ್ಕ ಇಲ್ಲದವಳು, ಎಂಬುದಕ್ಕೆ ಆಧಾರವನ್ನು ಊರ ಬಾಗಿಲಿಗೆ ಹಿರಿಯರ ಮುಂದೆ ತಂದು ತೋರಿಸಬೇಕು.</verse>
				<verse number="16">ಆಮೇಲೆ ಹುಡುಗಿಯ ತಂದೆಯು ಹಿರಿಯರಿಗೆ ಹೇಳತಕ್ಕದ್ದೇನೆಂದರೆ, “ನನ್ನ ಮಗಳನ್ನು ಈ ಮನುಷ್ಯನಿಗೆ ಹೆಂಡತಿಯಾಗಿ ಕೊಟ್ಟಿದ್ದೇನೆ, ಅವನು ಅವಳನ್ನು ದ್ವೇಷಿಸಿ,</verse>
				<verse number="17">ಅವನು, ‘ನಿನ್ನ ಮಗಳು ಕನ್ನಿಕೆಯಲ್ಲವೆಂದು ಕಂಡೆನೆಂಬುದಾಗಿ, ಅವಳಿಗೆ ವಿರೋಧವಾದ ಕೆಟ್ಟ ಮಾತಿಗೆ ಆಸ್ಪದಕೊಟ್ಟಿದ್ದಾನೆ.’ ಆದರೂ ನನ್ನ ಮಗಳ ಕನ್ಯಾಲಕ್ಷಣಕ್ಕೆ ಇದೇ ಪ್ರಮಾಣ,” ಎಂದು ಹೇಳಿ, ಅವರು ಪಟ್ಟಣದ ಹಿರಿಯರ ಮುಂದೆ ಬಟ್ಟೆಯನ್ನು ಹಾಸಬೇಕು.</verse>
				<verse number="18">ಆಗ ಪಟ್ಟಣದ ಹಿರಿಯರು ಆ ಮನುಷ್ಯನನ್ನು ತೆಗೆದುಕೊಂಡು ಬಂದು ಅವನನ್ನು ಶಿಕ್ಷಿಸಬೇಕು.</verse>
				<verse number="19">ಅವನು ಇಸ್ರಾಯೇಲಿನಲ್ಲಿ ಒಬ್ಬ ಕನ್ನಿಕೆಯ ಹೆಸರನ್ನು ಕೆಡಿಸಿದ್ದರಿಂದ, ಅವನಿಗೆ ನೂರು ಬೆಳ್ಳಿ ಶೆಕೆಲ್‌ಗಳ ದಂಡವನ್ನು ವಿಧಿಸಿ, ಅದನ್ನು ಆ ಹುಡುಗಿಯ ತಂದೆಗೆ ಕೊಡಬೇಕು. ಇದಲ್ಲದೆ ಅವಳು ಅವನಿಗೆ ಹೆಂಡತಿಯಾಗಬೇಕು, ಅವನು ಬದುಕಿರುವವರೆಗೆ ಅವಳನ್ನು ಪರಿತ್ಯಾಗಮಾಡಬಾರದು.</verse>
				<verse number="20">ಆದರೆ ಆ ಮಾತು ಸತ್ಯವಾಗಿದ್ದರೆ, ಆ ಹುಡುಗಿಯಲ್ಲಿ ಕನ್ಯಾಲಕ್ಷಣ ಕಾಣದೆ ಇದ್ದರೆ,</verse>
				<verse number="21">ಆ ಹುಡುಗಿಯನ್ನು ಅವಳ ತಂದೆಯ ಮನೆ ಬಾಗಿಲಿಗೆ ತರಬೇಕು. ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು. ಏಕೆಂದರೆ ಅವಳು ತಂದೆಯ ಮನೆಯಲ್ಲಿರುವಾಗಲೇ ಅಕ್ರಮವಾಗಿ ನಡೆದು, ಇಸ್ರಾಯೇಲಿನಲ್ಲಿ ಸೂಳೆತನ ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.</verse>
				<verse number="22">ಒಬ್ಬ ಮನುಷ್ಯನು ಪರನ ಹೆಂಡತಿಯೊಡನೆ ಮಲಗಿಕೊಂಡವನಾಗಿ ಸಿಕ್ಕಿಬಿದ್ದರೆ, ಆ ಸ್ತ್ರೀಯ ಸಂಗಡ ಮಲಗಿಕೊಂಡ ಮನುಷ್ಯನೂ ಆ ಸ್ತ್ರೀಯೂ ಇಬ್ಬರೂ ಸಾಯಬೇಕು. ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.</verse>
				<verse number="23">ಕನ್ನಿಕೆಯಾದ ಒಬ್ಬ ಹುಡುಗಿ ಒಬ್ಬ ಮನುಷ್ಯನಿಗೆ ನಿಶ್ಚಯ ಮಾಡಿರಲಾಗಿ, ಮತ್ತೊಬ್ಬ ಮನುಷ್ಯನು ಆ ಪಟ್ಟಣದಲ್ಲಿ ಅವಳನ್ನು ಕಂಡು ಅವಳ ಸಂಗಡ ಮಲಗಿದರೆ,</verse>
				<verse number="24">ಅವರಿಬ್ಬರನ್ನೂ ಆ ಪಟ್ಟಣದ ಬಾಗಿಲಿನ ಹೊರಗೆ ತಂದು, ಅವರು ಸಾಯುವ ಹಾಗೆ ಕಲ್ಲೆಸೆಯಬೇಕು. ಆ ಹುಡುಗಿಯು ಪಟ್ಟಣದಲ್ಲಿ ಇದ್ದರೂ, ಕೂಗದೆ ಇದ್ದದ್ದರಿಂದಲೂ, ಆ ಮನುಷ್ಯನು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.</verse>
				<verse number="25">ಆದರೆ ಆ ಮನುಷ್ಯನು ನಿಶ್ಚಯಮಾಡಿದ ಹುಡುಗಿಯನ್ನು ಹೊಲದಲ್ಲಿ ಕಂಡು ಅವಳನ್ನು ಬಲಾತ್ಕರಿಸಿ, ಅವಳ ಸಂಗಡ ಮಲಗಿದರೆ, ಅವಳ ಸಂಗಡ ಮಲಗಿದ ಮನುಷ್ಯನು ಮಾತ್ರ ಸಾಯಬೇಕು. ಆದರೆ ಆ ಹುಡುಗಿಗೆ ಏನೂ ಮಾಡಬಾರದು.</verse>
				<verse number="26">ಆ ಹುಡುಗಿಯಲ್ಲಿ ಮರಣಕ್ಕೆ ಯೋಗ್ಯವಾದ ಪಾಪವಿಲ್ಲ. ಆ ಕಾರ್ಯವು ಒಬ್ಬನು ತನ್ನ ನೆರೆಯವನಿಗೆ ವಿರೋಧವಾಗಿ ಎದ್ದು ಅವನನ್ನು ಕೊಂದುಹಾಕಿದ ಹಾಗಿದೆ.</verse>
				<verse number="27">ಏಕೆಂದರೆ ಅವನು ಹೊಲದಲ್ಲಿ ಅವಳನ್ನು ಕಂಡನು, ನಿಶ್ಚಯಮಾಡಿದ ಆ ಹುಡುಗಿ ಕೂಗಿದಳು. ಆದರೆ ರಕ್ಷಿಸುವವನು ಅವಳಿಗೆ ಯಾರೂ ಇರಲಿಲ್ಲ.</verse>
				<verse number="28">ಒಬ್ಬ ಮನುಷ್ಯನು ನಿಶ್ಚಯ ಮಾಡದಿರುವ ಕನ್ಯೆಯನ್ನು ಕಂಡು, ಅವಳನ್ನು ಹಿಡಿದು, ಅವಳ ಸಂಗಡ ಮಲಗಿ ಸಿಕ್ಕಿಬಿದ್ದರೆ,</verse>
				<verse number="29">ಅವಳ ಸಂಗಡ ಮಲಗಿದ ಮನುಷ್ಯನು ಆ ಹುಡುಗಿಯ ತಂದೆಗೆ ಐವತ್ತು ಬೆಳ್ಳಿ ಶೆಕೆಲ್‌ಗಳನ್ನು ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು, ಏಕೆಂದರೆ ಅವನು ಅವಳನ್ನು ಕೆಡಿಸಿದ್ದರಿಂದ, ಬದುಕುವ ದಿವಸಗಳೆಲ್ಲಾ ಅವಳನ್ನು ಪರಿತ್ಯಾಗಮಾಡಬಾರದು.</verse>
				<verse number="30">ಯಾರೂ ತನ್ನ ತಂದೆಯ ಹೆಂಡತಿಯನ್ನು ಮದುವೆ ಮಾಡಿಕೊಳ್ಳಬಾರದು. ತನ್ನ ತಂದೆಯ ಹಾಸಿಗೆಯನ್ನು ಅಗೌರವಿಸಬಾರದು.</verse>
			</chapter>
			<chapter number="23">
				<verse number="1">ಬೀಜ ಹೊಡಿಸಿಕೊಂಡವರು ಅಥವಾ ಜನನ ಇಂದ್ರಿಯ ಕತ್ತರಿಸಿಕೊಂಡವರು ಯೆಹೋವ ದೇವರ ಸಭೆಗೆ ಸೇರಬಾರದು.</verse>
				<verse number="2">ಅನೈತಿಕ ಸಂಬಂಧದಿಂದ ಹುಟ್ಟಿದ ಸಂತತಿಯವರು, ಹತ್ತನೆಯ ತಲಾಂತರದವರೆಗೂ ಯೆಹೋವ ದೇವರ ಸಭೆಗೆ ಸೇರಬಾರದು.</verse>
				<verse number="3">ಅಮ್ಮೋನಿಯರು ಇಲ್ಲವೆ ಮೋವಾಬ್ಯರು ಯೆಹೋವ ದೇವರ ಸಭೆಗೆ ಸೇರಬಾರದು; ಹತ್ತನೆಯ ತಲಾಂತರವರೆಗೆ ಅವರು ಯೆಹೋವ ದೇವರ ಸಭೆಯಲ್ಲಿ ಸೇರಬಾರದು.</verse>
				<verse number="4">ಏಕೆಂದರೆ ನೀವು ಈಜಿಪ್ಟನ್ನು ಬಿಟ್ಟು ಬರುವಾಗ, ಅವರು ನಿಮಗೆ ರೊಟ್ಟಿಯನ್ನೂ ನೀರನ್ನೂ ಕೊಡುವುದಕ್ಕೆ ಎದುರುಗೊಳ್ಳಲಿಲ್ಲ. ನಿಮ್ಮನ್ನು ಶಪಿಸುವುದಕ್ಕೆ ಮೆಸೊಪೊತಾಮ್ಯದಲ್ಲಿರುವ ಪೆತೋರಿನಿಂದ ಬೆಯೋರನ ಮಗ ಬಿಳಾಮನಿಗೆ ಕೂಲಿ ಕೊಟ್ಟು ನಿಮಗೆ ವಿರೋಧವಾಗಿ ಕರೆಸಿದರು.</verse>
				<verse number="5">ಆದರೂ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸಲಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ಅವನಿಂದ ಶಾಪವನ್ನು ನುಡಿಸದೆ, ಆಶೀರ್ವಾದವನ್ನೇ ಹೇಳಿಸಿದರು.</verse>
				<verse number="6">ನೀವು ಇರುವವರೆಗೆ ಎಂದಿಗೂ ಅವರ ಏಳಿಗೆಯನ್ನು, ಕ್ಷೇಮವನ್ನು ಬಯಸಬಾರದು.</verse>
				<verse number="7">ಎದೋಮ್ಯನನ್ನು ಅಸಹ್ಯಿಸಬೇಡಿರಿ, ಏಕೆಂದರೆ ಅವನು ನಿಮ್ಮ ಸಹೋದರನು; ಈಜಿಪ್ಟಿನವನನ್ನು ಅಸಹ್ಯಿಸಬೇಡಿರಿ, ಏಕೆಂದರೆ ಅವನ ದೇಶದಲ್ಲಿ ನೀವು ಪರವಾಸಿಯಾಗಿದ್ದಿರಿ.</verse>
				<verse number="8">ಅವರಿಗೆ ಹುಟ್ಟುವ ಮಕ್ಕಳಲ್ಲಿ ಮೂರನೆಯ ತಲಾಂತರದವರು ಯೆಹೋವ ದೇವರ ಸಭೆಯಲ್ಲಿ ಸೇರಬಹುದು.</verse>
				<verse number="9">ನೀವು ಶತ್ರುಗಳಿಗೆ ವಿರೋಧವಾಗಿ ಸೈನ್ಯವಾಗಿ ಹೊರಟರೆ, ಪಾಳೆಯದಲ್ಲಿ ಯಾವ ಅಶುದ್ಧ ಕಾರ್ಯಗಳು ಇಲ್ಲದಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.</verse>
				<verse number="10">ರಾತ್ರಿಯಲ್ಲಿ ವೀರ್ಯ ವಿಸರ್ಜನೆಯ ದೆಸೆಯಿಂದ ಯಾವನಾದರು ಅಶುದ್ಧನಾದವನು ನಿಮ್ಮಲ್ಲಿದ್ದರೆ, ಅವನು ಪಾಳೆಯದ ಒಳಗೆ ಇರದೆ ಹೊರಗೆ ಇರಬೇಕು.</verse>
				<verse number="11">ಸಂಜೆ ಆಗುತ್ತಿರುವಾಗ ಅವನು ಸ್ನಾನಮಾಡಿ, ಸೂರ್ಯನು ಮುಳುಗಿದಾಗ ಪಾಳೆಯದ ಒಳಗೆ ತಿರುಗಿಬರಬಹುದು.</verse>
				<verse number="12">ಇದಲ್ಲದೆ ನೀವು ಮಲವಿಸರ್ಜನೆಗೆ ಹೋಗಲು ಪಾಳೆಯದ ಹೊರಗೆ ಸ್ಥಳವಿರಬೇಕು.</verse>
				<verse number="13">ನಿಮ್ಮ ಆಯುಧಗಳ ಜೊತೆಯಲ್ಲಿ ಕಬ್ಬಿಣದ ಸಲಕೆ ಇರಬೇಕು. ನೀವು ಮಲವಿಸರ್ಜನೆ ಮಾಡಿದಾಗ, ಆ ಸಲಕೆಯಿಂದ ಅಗೆದು ಮುಚ್ಚಿಬಿಡಬೇಕು.</verse>
				<verse number="14">ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ರಕ್ಷಿಸುವುದಕ್ಕೂ, ನಿಮ್ಮ ಶತ್ರುಗಳನ್ನು ನಿಮ್ಮ ಮುಂದೆ ಒಪ್ಪಿಸಿಬಿಡುವುದಕ್ಕೂ ಪಾಳೆಯದ ಮಧ್ಯದಲ್ಲಿ ಸಂಚಾರ ಮಾಡುತ್ತಾರೆ. ಅವರು ನಿಮ್ಮಲ್ಲಿ ಅಶುದ್ಧವಾದ ಕಾರ್ಯವನ್ನು ನೋಡಿ, ನಿಮ್ಮನ್ನು ಬಿಟ್ಟು ತಿರುಗಿಹೋಗದಂತೆ ನಿಮ್ಮ ಪಾಳೆಯವು ನಿರ್ಮಲವಾಗಿರಬೇಕು.</verse>
				<verse number="15">ತನ್ನ ಯಜಮಾನನನ್ನು ಬಿಟ್ಟು, ನಿನ್ನ ಬಳಿಗೆ ತಪ್ಪಿಸಿಕೊಂಡು ಬಂದ ದಾಸನನ್ನು ಹಿಡಿದು ಯಜಮಾನನಿಗೆ ಒಪ್ಪಿಸಬಾರದು.</verse>
				<verse number="16">ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಒಳ್ಳೆಯದೆಂದು ತೋಚುತ್ತದೆಯೋ, ಅಲ್ಲಿಯೇ ವಾಸವಾಗಲಿ. ಅವನನ್ನು ನೀವು ಕುಗ್ಗಿಸಬಾರದು.</verse>
				<verse number="17">ಇಸ್ರಾಯೇಲರಲ್ಲಿ ಯಾವ ಸ್ತ್ರೀಯೂ ಗುಡಿ ವೇಶ್ಯೆಯಾಗಬಾರದು. ಇಸ್ರಾಯೇಲರಲ್ಲಿ ಯಾವ ಪುರುಷನೂ ಅಂಥ ವೇಶ್ಯೆತನಕ್ಕೆ ಇಳಿಯಬಾರದು.</verse>
				<verse number="18">ಇಸ್ರಾಯೇಲರ ಪುರುಷ ಅಥವಾ ಸ್ತ್ರೀಯು ಸೂಳೆಗಾರಿಕೆಯಿಂದ ಸಂಪಾದಿಸಿದ ಹಣವನ್ನು ಹರಕೆಯಾಗಿ ದೇವ ಮಂದಿರದೊಳಗೆ ತರಬಾರದು. ಏಕೆಂದರೆ ಅವೆರಡನ್ನು ನಿನ್ನ ದೇವರಾದ ಯೆಹೋವ ದೇವರು ದ್ವೇಷಿಸುತ್ತಾರೆ.</verse>
				<verse number="19">ನಿನ್ನ ಸಹೋದರನಿಗೆ ಹಣವನ್ನಾಗಲಿ, ಊಟವನ್ನಾಗಲಿ, ಬೇರೆ ಯಾವುದನ್ನಾಗಲಿ ಬಡ್ಡಿಗೆ ಕೊಡಬಾರದು.</verse>
				<verse number="20">ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸಹೋದರನಿಗೆ ಕೊಡಬಾರದು. ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ನಾಡಿನಲ್ಲಿ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಎಲ್ಲಾ ಕೆಲಸಗಳನ್ನು ಆಶೀರ್ವದಿಸುತ್ತಾರೆ.</verse>
				<verse number="21">ನೀನು ನಿನ್ನ ದೇವರಾದ ಯೆಹೋವ ದೇವರಿಗೆ ಹರಕೆಮಾಡಿದ ಮೇಲೆ ಅದನ್ನು ಸಲ್ಲಿಸುವುದಕ್ಕೆ ತಡಮಾಡಬೇಡ. ಏಕೆಂದರೆ ನಿನ್ನ ದೇವರಾದ ಯೆಹೋವ ದೇವರು ಅದನ್ನು ನಿಶ್ಚಯವಾಗಿಯೂ ನಿನ್ನ ಬಳಿಯಲ್ಲಿ ವಿಚಾರಿಸುವರು. ತೀರಿಸದೆ ಹೋಗುವದು ಪಾಪ.</verse>
				<verse number="22">ಆದರೆ ನೀನು ಹರಕೆ ಮಾಡದಿದ್ದರೆ, ನೀನು ದೋಷಿಯಾಗುವುದಿಲ್ಲ.</verse>
				<verse number="23">ನಿನ್ನ ತುಟಿಗಳಿಂದ ಹೊರಟಿದ್ದನ್ನು ಮಾಡುವುದಕ್ಕೆ ತಪ್ಪಬೇಡ. ನಿನ್ನ ದೇವರಾದ ಯೆಹೋವ ದೇವರಿಗೆ ನಿನ್ನ ಬಾಯಿಯಿಂದಲೇ ನೀನು ಹರಕೆ ಮಾಡಿದಿಯಲ್ಲವೇ.</verse>
				<verse number="24">ನಿನ್ನ ನೆರೆಯವನ ದ್ರಾಕ್ಷಿ ತೋಟಕ್ಕೆ ಬಂದರೆ, ನಿನ್ನ ಮನಸ್ಸು ತೃಪ್ತಿಯಾಗುವವರೆಗೆ ಹಣ್ಣುಗಳನ್ನು ತಿನ್ನಬಹುದು. ಆದರೆ ನಿನ್ನ ಚೀಲದಲ್ಲಿ ಹಾಕಿಕೊಳ್ಳಬಾರದು.</verse>
				<verse number="25">ನಿನ್ನ ನೆರೆಯವನ ಪೈರಿನ ಬಳಿಗೆ ಹಾದುಹೋಗುವಾಗ, ಕೈಯಿಂದ ತೆನೆಗಳನ್ನು ಕೀಳಬಹುದು. ಆದರೆ ನಿನ್ನ ನೆರೆಯವನ ಪೈರಿನಲ್ಲಿ ಕುಡುಗೋಲು ಹಾಕಿ ಕೊಯ್ಯಬಾರದು.</verse>
			</chapter>
			<chapter number="24">
				<verse number="1">ಒಬ್ಬನು ತಾನು ಮದುವೆಮಾಡಿಕೊಂಡ ಮಹಿಳೆಯಲ್ಲಿ ಏನೋ ಅವಲಕ್ಷಣವನ್ನು ಕಂಡು ಅವಳಲ್ಲಿ ಅಸಂತೃಪ್ತನಾದರೆ, ವಿವಾಹ ವಿಚ್ಛೇದನ ಪತ್ರವನ್ನು ಬರೆದು, ಅವಳ ಕೈಯಲ್ಲಿ ಕೊಟ್ಟು, ಅವಳನ್ನು ತನ್ನ ಮನೆಯಿಂದ ಕಳುಹಿಸಿಬಿಟ್ಟಾಗ,</verse>
				<verse number="2">ಅವಳು ಅವನ ಮನೆಯನ್ನು ಬಿಟ್ಟುಹೋದ ಮೇಲೆ ಮತ್ತೊಬ್ಬನಿಗೆ ಹೆಂಡತಿಯಾಗಬಹುದು.</verse>
				<verse number="3">ಆ ಮತ್ತೊಬ್ಬ ಗಂಡನು ಅವಳನ್ನು ಹಗೆಮಾಡಿ, ವಿವಾಹ ವಿಚ್ಛೇದನ ಪತ್ರವನ್ನು ಬರೆದು ಅವಳ ಕೈಯಲ್ಲಿ ಕೊಟ್ಟು, ತನ್ನ ಮನೆಯಿಂದ ಕಳುಹಿಸಿಬಿಟ್ಟರೆ, ಇಲ್ಲವೆ ಆ ಎರಡನೆಯ ಗಂಡನು ಸತ್ತರೆ,</verse>
				<verse number="4">ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡ ಅವಳನ್ನು ಪುನಃ ಹೆಂಡತಿಯಾಗಿ ಸ್ವೀಕರಿಸಬಾರದು. ಅದು ಯೆಹೋವ ದೇವರ ಮುಂದೆ ಅಸಹ್ಯವೇ. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ದೋಷವುಂಟಾಗಲು ಅವಕಾಶ ಕೊಡಬಾರದು.</verse>
				<verse number="5">ಒಬ್ಬನು ಹೊಸದಾಗಿ ಮದುವೆಯಾಗಿದ್ದರೆ, ಅವನನ್ನು ಯುದ್ಧಕ್ಕೆ ಕಳುಹಿಸಬಾರದು ಅಥವಾ ಜವಾಬ್ದಾರಿಯ ಯಾವುದೊಂದೂ ಕೆಲಸವನ್ನು ಅವನಿಂದ ಮಾಡಿಸಬಾರದು. ಅವನು ಒಂದು ವರ್ಷ ಸ್ವತಂತ್ರನಾಗಿ ತನ್ನ ಮನೆಯಲ್ಲಿದ್ದು, ತಾನು ಮದುವೆಯಾದ ಹೆಂಡತಿಯೊಡನೆ ಸುಖವಾಗಿರಲಿ.</verse>
				<verse number="6">ಬೀಸುವ ಕಲ್ಲಿನಲ್ಲಿ ಅಡಿಗಲ್ಲನ್ನಾದರೂ, ಮೇಲಿನ ಕಲ್ಲನ್ನಾದರೂ ಒತ್ತೆಯಾಗಿ ತೆಗೆದುಕೊಳ್ಳಬಾರದು. ಹಾಗೆ ಮಾಡಿದರೆ, ಅದು ವ್ಯಕ್ತಿಯ ಜೀವನೋಪಾಯವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಿರುವುದು.</verse>
				<verse number="7">ಒಬ್ಬನು ತನ್ನ ಸಹೋದರರಾದ ಇಸ್ರಾಯೇಲರಲ್ಲಿ ಒಬ್ಬನನ್ನು ಕದ್ದು ಅವನನ್ನು ಗುಲಾಮನಾಗಿ ನಡೆಸಿಕೊಂಡದ್ದು ಅಥವಾ ಮಾರಿಬಿಟ್ಟದ್ದು ತಿಳಿದುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ನಡುವೆಯಿಂದ ತೆಗೆದುಹಾಕಬೇಕು.</verse>
				<verse number="8">ಕುಷ್ಠರೋಗಿಗಳ ವಿಷಯದಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವುದನ್ನೆಲ್ಲಾ ನೀವು ಜಾಗ್ರತೆಯಿಂದ ಕಾಪಾಡಿ ಕೈಗೊಳ್ಳುವ ಹಾಗೆ ನೋಡಿಕೊಳ್ಳಿ. ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನು ನೀವು ಕಾಪಾಡಿ ಕೈಗೊಳ್ಳಬೇಕು.</verse>
				<verse number="9">ನೀವು ಈಜಿಪ್ಟಿನಿಂದ ಹೊರಗೆ ಬಂದಾಗ, ಮಾರ್ಗದಲ್ಲಿ ನಿಮ್ಮ ದೇವರಾದ ಯೆಹೋವ ದೇವರು ಮಿರ್ಯಾಮಗಳಿಗೆ ಮಾಡಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ.</verse>
				<verse number="10">ನಿನ್ನ ನೆರೆಯವನಿಗೆ ನೀವು ಯಾವುದೇ ರೀತಿಯ ಸಾಲಕೊಟ್ಟರೆ, ಅವನ ಒತ್ತೆಯನ್ನು ಕೇಳಲು ಅವನ ಮನೆಯಲ್ಲಿ ಪ್ರವೇಶಿಸಬಾರದು.</verse>
				<verse number="11">ನೀನು ಹೊರಗೆ ನಿಂತಿರಬೇಕು. ಸಾಲ ಕೊಟ್ಟವನೇ ಒತ್ತೆಯನ್ನು ನಿನಗೆ ಹೊರಗೆ ತರಬೇಕು.</verse>
				<verse number="12">ಅವನು ಬಡವನಾದರೆ, ಅವನ ಒತ್ತೆಯನ್ನು ಇಟ್ಟುಕೊಂಡು ರಾತ್ರಿ ಮಲಗಬೇಡ.</verse>
				<verse number="13">ನಿನ್ನ ನೆರೆಯವನು ಅದರಲ್ಲಿ ಮಲಗಲು ಸಾಯಂಕಾಲದ ಹೊತ್ತಿಗೆ ಅವನು ಹೊದ್ದುಕೊಳ್ಳುವ ವಸ್ತ್ರವನ್ನು ಹಿಂತಿರುಗಿಸು. ಆಗ ಅವನು ನಿನ್ನನ್ನು ಆಶೀರ್ವದಿಸುವನು. ನೀನು ಮಾಡಿದ್ದು ನಿನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ನೀತಿಯ ಕಾರ್ಯವೆಂದು ಪರಿಗಣಿಸಲಾಗುವುದು.</verse>
				<verse number="14">ನಿನ್ನ ನಾಡಿನ ಸಹೋದರನಾಗಲಿ, ಪರದೇಶಿಯವನಾಗಲಿ, ಬಡ ಮತ್ತು ನಿರ್ಗತಿಕನಾಗಿರುವ ಕೂಲಿಯವನನ್ನು ಬಾಧಿಸಬಾರದು.</verse>
				<verse number="15">ಅವನ ದಿನದ ಕೂಲಿಯನ್ನು ಆ ದಿನದಲ್ಲೇ ಸೂರ್ಯನು ಮುಳುಗುವುದರೊಳಗೆ ಅವನಿಗೆ ಕೊಡಬೇಕು. ಏಕೆಂದರೆ ಅವನು ಬಡವನಾಗಿದ್ದರಿಂದ ಅದನ್ನೇ ಎದುರು ನೋಡುತ್ತಿರುತ್ತಾನೆ. ನೀವು ಕೊಡದಿದ್ದರೆ, ಅವನು ನಿನಗೆ ವಿರೋಧವಾಗಿ ಯೆಹೋವ ದೇವರಿಗೆ ಮೊರೆಯಿಡುವನು. ಆಗ ನಿನ್ನ ಮೇಲೆ ಪಾಪದ ಹೊರೆ ಬಿದ್ದೀತು.</verse>
				<verse number="16">ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆಯ ಪಾಪಕ್ಕಾಗಿ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪದ ನಿಮಿತ್ತವೇ ಮರಣಶಿಕ್ಷೆಯನ್ನು ಹೊಂದಬೇಕು.</verse>
				<verse number="17">ಪರನಿಗೂ, ದಿಕ್ಕಿಲ್ಲದವನಿಗೂ ನ್ಯಾಯವನ್ನು ತಪ್ಪಿಸಬೇಡ. ವಿಧವೆಯಿಂದ ಉಡುವ ವಸ್ತ್ರವನ್ನು ಒತ್ತೆಯಾಗಿ ತೆಗೆದುಕೊಳ್ಳಬೇಡ.</verse>
				<verse number="18">ನೀನು ಈಜಿಪ್ಟಿನಲ್ಲಿ ದಾಸನಾಗಿದ್ದೆ ಎಂದೂ, ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಲ್ಲಿಂದ ವಿಮೋಚಿಸಿದರೆಂದೂ ಜ್ಞಾಪಕಮಾಡಿಕೊಳ್ಳಬೇಕು. ಆದ್ದರಿಂದ ಈ ಕಾರ್ಯಗಳನ್ನೆಲ್ಲಾ ಮಾಡಬೇಕೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ.</verse>
				<verse number="19">ಹೊಲದಲ್ಲಿ ನಿನ್ನ ಪೈರನ್ನು ಕೊಯ್ಯುವಾಗ, ಹೊಲದಲ್ಲಿ ಸಿವುಡನ್ನು ಮರೆತುಬಿಟ್ಟರೆ, ಅದನ್ನು ತೆಗೆದುಕೊಳ್ಳುವುದಕ್ಕೆ ತಿರುಗಿಕೊಳ್ಳಬಾರದು. ಅದು ಪರನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ. ನೀವು ಹೀಗೆ ನಡೆದುಕೊಂಡರೆ, ನಿನ್ನ ದೇವರಾದ ಯೆಹೋವ ದೇವರು ನಿನ್ನ ಎಲ್ಲಾ ದುಡಿಮೆಯಲ್ಲಿ ನಿನ್ನನ್ನು ಆಶೀರ್ವದಿಸುವರು.</verse>
				<verse number="20">ಓಲಿವ್ ಮರಗಳ ರೆಂಬೆಗಳನ್ನು ಹೊಡೆದು ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವದಕ್ಕೆ ಹೋಗಬಾರದು, ಮಿಕ್ಕಿದ್ದನ್ನು ಪರದೇಶದವನಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ಇರಲಿ.</verse>
				<verse number="21">ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು. ಪರದೇಶಿ, ತಂದೆತಾಯಿ ಇಲ್ಲದ ವ್ಯಕ್ತಿ, ವಿಧವೆ ಇಂಥವರಿಗಾಗಿ ಅದನ್ನು ಬಿಟ್ಟುಬಿಡು.</verse>
				<verse number="22">ನೀವು ಈಜಿಪ್ಟ್ ದೇಶದಲ್ಲಿ ಗುಲಾಮರಾಗಿ ವಾಸವಾಗಿದ್ದಿರಿ ಎಂದು ಜ್ಞಾಪಕಮಾಡಿಕೊಳ್ಳಿರಿ. ಆದ್ದರಿಂದ ಈ ಎಲ್ಲಾ ಕಾರ್ಯಗಳನ್ನು ಮಾಡಬೇಕೆಂದು ನಾನು ನಿಮಗೆ ಆಜ್ಞಾಪಿಸುತ್ತೇನೆ.</verse>
			</chapter>
			<chapter number="25">
				<verse number="1">ಜನರಲ್ಲಿ ಏನಾದರೂ ವ್ಯಾಜ್ಯವಿದ್ದರೆ, ಅವರು ಅದನ್ನು ನ್ಯಾಯಾಲಯಕ್ಕೆ ಕೊಂಡೊಯ್ಯಬೇಕು. ನ್ಯಾಯಾಧೀಶರು ನೀತಿವಂತನನ್ನು ನೀತಿವಂತನೆಂದೂ ತಪ್ಪುಳ್ಳವನನ್ನು ಅಪರಾಧಿಯೆಂದೂ ನ್ಯಾಯತೀರಿಸುವರು.</verse>
				<verse number="2">ಅಪರಾಧಿಗೆ ಪೆಟ್ಟಿನ ಶಿಕ್ಷೆ ತಿರ್ಮಾನವಾದರೆ, ನ್ಯಾಯಾಧಿಪತಿ ಅವನನ್ನು ಮಲಗಿಸಿ, ಅವನ ಅಪರಾಧಕ್ಕೆ ಅನುಸಾರವಾಗಿ ಪೆಟ್ಟುಗಳನ್ನು ತನ್ನ ಮುಂದೆಯೇ ಹೊಡಿಸಿ ಲೆಕ್ಕಿಸಬೇಕು.</verse>
				<verse number="3">ಪೆಟ್ಟಿನ ಶಿಕ್ಷೆ ನಲವತ್ತಕ್ಕಿಂತ ಹೆಚ್ಚಿರಬಾರದು. ಅಷ್ಟಕ್ಕಿಂತ ಮೀರಿ ನೀವು ಹೆಚ್ಚುಪೆಟ್ಟುಗಳನ್ನು ಹೊಡಿಸಿದರೆ, ನಿಮ್ಮ ಸ್ವದೇಶದವನನ್ನು ಕೇವಲ ನೀಚನನ್ನಾಗಿ ನೀವು ಕಂಡಂತಾಗುವುದು.</verse>
				<verse number="4">ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು.</verse>
				<verse number="5">ಸಹೋದರರು ಕೂಡಿ ವಾಸಮಾಡುವಾಗ, ಅವರಲ್ಲಿ ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಆ ಸತ್ತವನ ಹೆಂಡತಿ ಮನೆಬಿಟ್ಟು ಅನ್ಯನನ್ನು ಮದುವೆಯಾಗಬಾರದು. ಗಂಡನ ಸಹೋದರನು ಅವಳನ್ನು ಹೆಂಡತಿಯಾಗಿ ತೆಗೆದುಕೊಂಡು ಮೈದುನನ ಕರ್ತವ್ಯವನ್ನು ಪೂರೈಸಬೇಕು.</verse>
				<verse number="6">ಅವಳು ಹೆರುವ ಚೊಚ್ಚಲ ಮಗನನ್ನು ಸತ್ತವನ ಮಗನೆಂದೇ ಎಣಿಸಬೇಕು, ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಾಯೇಲರಲ್ಲಿ ಅಳಿದುಹೋಗುವುದಿಲ್ಲ.</verse>
				<verse number="7">ಆದರೆ ಆ ಮನುಷ್ಯನು ತನ್ನ ಅತ್ತಿಗೆಯನ್ನು ತೆಗೆದುಕೊಳ್ಳವ ಮನಸ್ಸಿಲ್ಲದಿದ್ದರೆ, ಅತ್ತಿಗೆಯು ಚಾವಡಿಗೆ ಹೋಗಿ ಹಿರಿಯರ ಹತ್ತಿರ ಬಂದು, “ನನ್ನ ಗಂಡನ ಸಹೋದರನು ತನ್ನ ಸಹೋದರನ ಹೆಸರನ್ನು ಇಸ್ರಾಯೇಲಿನಲ್ಲಿ ಮುಂದುವರಿಸಲು ಸಿದ್ಧನಿಲ್ಲ. ಅವನು ತನ್ನ ಮೈದುನನ ಕರ್ತವ್ಯವನ್ನು ನಡೆಸಲು ಮನಸ್ಸಿಲ್ಲದವನಾಗಿದ್ದಾನೆ,” ಎಂದು ಹೇಳಬೇಕು.</verse>
				<verse number="8">ಆಗ ಅವನ ಪಟ್ಟಣದ ಹಿರಿಯರು ಅವನನ್ನು ಕರೆದು, ಅವನ ಸಂಗಡ ಮಾತನಾಡಬೇಕು. ಅವನು ನಿಂತುಕೊಂಡು, “ಅವಳನ್ನು ಮದುವೆಯಾಗುವುದಕ್ಕೆ ನನಗೆ ಮನಸ್ಸಿಲ್ಲ,” ಎಂದು ಹೇಳಿದರೆ,</verse>
				<verse number="9">ಅವನ ಅತ್ತಿಗೆ ಹಿರಿಯರ ಮುಂದೆ ಅವನ ಬಳಿಗೆ ಬಂದು, ಕೆರವನ್ನು ಅವನ ಪಾದದಿಂದ ಬಿಡಿಸಿ, ಅವನ ಮುಖದಲ್ಲಿ ಉಗುಳಿ ಉತ್ತರಕೊಟ್ಟು, “ತನ್ನ ಸಹೋದರನ ಮನೆಯನ್ನು ಕಟ್ಟದವನಿಗೆ ಹೀಗೆಯೇ ಮಾಡಬೇಕು,” ಎಂದು ಹೇಳಲಿ.</verse>
				<verse number="10">ಆಮೇಲೆ ಆ ಮನುಷ್ಯನ ಮನೆಯವರಿಗೆ ಇಸ್ರಾಯೇಲಿನಲ್ಲಿ ಕೆರಬಿಚ್ಚಿಸಿಕೊಂಡವನ ಮನೆಯವರು ಎಂದು ಹೆಸರಾಗುವುದು.</verse>
				<verse number="11">ಇಬ್ಬರು ಮನುಷ್ಯರು, ಒಬ್ಬನ ಸಂಗಡ ಒಬ್ಬನು ಜಗಳವಾಡುತ್ತಿರುವಾಗ, ಒಬ್ಬನ ಹೆಂಡತಿ ತನ್ನ ಗಂಡನನ್ನು ಹೊಡೆಯುವವನ ಕೈಯಿಂದ ಬಿಡಿಸುವುದಕ್ಕೆ ಸಮೀಪ ಬಂದು ಕೈಚಾಚಿ, ಅವನ ಜನನೇಂದ್ರಿಯವನ್ನು ಹಿಡಿದರೆ,</verse>
				<verse number="12">ಅವಳ ಕೈಯನ್ನು ಕಡಿದುಹಾಕಬೇಕು. ಅವಳಿಗೆ ಕರುಣೆ ತೋರಿಸಬಾರದು.</verse>
				<verse number="13">ಹೆಚ್ಚು ಕಡಿಮೆಯಾಗಿರುವ ಎರಡು ವಿಧವಾದ ಕಳ್ಳ ತೂಕದ ಕಲ್ಲುಗಳನ್ನು ನಿಮ್ಮ ಚೀಲದಲ್ಲಿಟ್ಟುಕೊಳ್ಳಬಾರದು.</verse>
				<verse number="14">ಹೆಚ್ಚು ಕಡಿಮೆಯಾದ ಎರಡು ವಿಧವಾದ ಕಳ್ಳ ಸೇರುಗಳು ನಿಮ್ಮ ಮನೆಯಲ್ಲಿರಬಾರದು.</verse>
				<verse number="15">ತೂಕದ ಕಲ್ಲೂ, ಅಳತೆಯ ಸೇರೂ, ಸರಿಯಾಗಿಯೂ ನ್ಯಾಯವಾಗಿಯೂ ಇರಬೇಕು. ಆಗ ನಿನ್ನ ದೇವರಾದ ಯೆಹೋವ ದೇವರು ನಿನಗೆ ಕೊಡುವ ಭೂಮಿಯ ಮೇಲೆ ನಿನ್ನ ದಿನಗಳು ಹೆಚ್ಚಾಗುತ್ತವೆ.</verse>
				<verse number="16">ಅಂಥ ಅನ್ಯಾಯ ಮಾಡುವವರೆಲ್ಲರೂ ನಿನ್ನ ದೇವರಾದ ಯೆಹೋವ ದೇವರಿಗೆ ಅಸಹ್ಯ.</verse>
				<verse number="17">ನೀವು ಈಜಿಪ್ಟನ್ನು ಬಿಟ್ಟು ಬರುವ ಮಾರ್ಗದಲ್ಲಿ ಅಮಾಲೇಕ್ಯರು ನಿನಗೆ ಮಾಡಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ.</verse>
				<verse number="18">ಅವರು ಮಾರ್ಗದಲ್ಲಿ ನಿಮಗೆ ಎದುರುಗೊಂಡು, ನೀವು ಆಯಾಸವುಳ್ಳವರಾಗಿಯೂ, ದಣಿದವರಾಗಿಯೂ ಇದ್ದ ಸಮಯದಲ್ಲಿ ನಿಮ್ಮ ಹಿಂದೆ ಇದ್ದ ಬಲಹೀನರೆಲ್ಲರನ್ನು ಹಿಂಭಾಗದಲ್ಲಿ ಸಂಹಾರ ಮಾಡಿದರು. ಅವರಿಗೆ ದೇವರ ಬಗ್ಗೆ ಯಾವ ಭಯವೂ ಇರಲಿಲ್ಲ.</verse>
				<verse number="19">ಆದ್ದರಿಂದ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಶಮಾಡಿಕೊಳ್ಳುವುದಕ್ಕೆ ಸೊತ್ತಾಗಿ ಕೊಡುವ ದೇಶದ ಸುತ್ತಲು ಇರುವ ಶತ್ರುಗಳಿಂದ ನಿಮ್ಮನ್ನು ಬಿಡಿಸಿ, ವಿಶ್ರಾಂತಿ ಕೊಡುವರು. ಆಗ ನೀವು ಅಮಾಲೇಕ್ಯರ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು, ಇದನ್ನು ಮರೆಯಬಾರದು.</verse>
			</chapter>
			<chapter number="26">
				<verse number="1">ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸ್ವತ್ತಾಗಿ ಕೊಡುವ ದೇಶಕ್ಕೆ ನೀವು ಬಂದು ಅದನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸಮಾಡುವಿರಿ.</verse>
				<verse number="2">ಆಗ ನಿಮ್ಮ ದೇಶದಿಂದ ನೀವು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಬುಟ್ಟಿಯಲ್ಲಿಟ್ಟು, ನಿಮ್ಮ ದೇವರಾದ ಯೆಹೋವ ದೇವರು ತಮ್ಮ ಹೆಸರನ್ನು ಸ್ಥಾಪಿಸುವದಕ್ಕೆ ಆಯ್ದುಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.</verse>
				<verse number="3">ಅಲ್ಲಿ ಆ ಕಾಲದಲ್ಲಿರುವ ಯಾಜಕನ ಬಳಿಗೆ ಹೋಗಿ ಅವನಿಗೆ, “ಯೆಹೋವ ದೇವರು ನಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ನಾನು ಸೇರಿದ್ದಾಯಿತೆಂದು ಈ ಹೊತ್ತು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಈಗ ನಾನು ಒಪ್ಪಿಕೊಳ್ಳುತ್ತೇನೆ,” ಎಂದು ಹೇಳಬೇಕು.</verse>
				<verse number="4">ಆಗ ಯಾಜಕನು ಆ ಬುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದು, ನಿಮ್ಮ ದೇವರಾದ ಯೆಹೋವ ದೇವರ ಬಲಿಪೀಠದ ಮುಂದೆ ಇಡಬೇಕು.</verse>
				<verse number="5">ಆಮೇಲೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮುಂದೆ, “ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಅಲೆದಾಡುತ್ತಾ ಸ್ವಲ್ಪ ಜನರೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಬಲಿಷ್ಠವಾದ ಮಹಾಜನಾಂಗವಾದರು.</verse>
				<verse number="6">ಆದರೆ ಈಜಿಪ್ಟಿನವರು ನಮ್ಮನ್ನು ಕ್ರೂರವಾಗಿ ನಡೆಸಿ, ನಮ್ಮ ಮೇಲೆ ದಬ್ಬಾಳಿಕೆ ಮಾಡಿ ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು.</verse>
				<verse number="7">ಆಗ ನಾವು ನಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ಮೊರೆಯಿಟ್ಟೆವು. ಯೆಹೋವ ದೇವರು ನಮ್ಮ ಸ್ವರವನ್ನು ಕೇಳಿ, ನಮ್ಮ ಸಂಕಟವನ್ನೂ ಕಷ್ಟವನ್ನೂ ದಬ್ಬಾಳಿಕೆಯನ್ನೂ ನೋಡಿದರು.</verse>
				<verse number="8">ಯೆಹೋವ ದೇವರು ನಮ್ಮನ್ನು ತಮ್ಮ ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಮಹಾಭಯದಿಂದಲೂ, ಸೂಚಕಕಾರ್ಯಗಳಿಂದಲೂ, ಅದ್ಭುತಗಳಿಂದಲೂ, ಈಜಿಪ್ಟಿನಿಂದ ಹೊರಗೆ ಬರಮಾಡಿ,</verse>
				<verse number="9">ನಮ್ಮನ್ನು ಈ ಸ್ಥಳಕ್ಕೆ ಕರೆತಂದು, ಹಾಲೂ ಜೇನೂ ಹರಿಯುವ ದೇಶವಾಗಿರುವ ಈ ದೇಶವನ್ನು ನಮಗೆ ಕೊಟ್ಟಿದ್ದಾರೆ.</verse>
				<verse number="10">ಹೀಗಿರುವುದರಿಂದ ಯೆಹೋವ ದೇವರೇ, ನೀವು ನಮಗೆ ಕೊಟ್ಟ ಭೂಮಿಯ ಪ್ರಥಮ ಫಲವನ್ನು ತಂದಿದ್ದೇವೆ,” ಎಂದು ಹೇಳಬೇಕು. ಆಗ ಅದನ್ನು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿಟ್ಟು, ಅವರನ್ನು ಆರಾಧಿಸಬೇಕು.</verse>
				<verse number="11">ನಿಮ್ಮ ದೇವರಾದ ಯೆಹೋವ ದೇವರು ನಿಮಗೂ ನಿಮ್ಮ ಮನೆಗೂ ಲೇವಿಯರಿಗೂ ನಿಮ್ಮ ಸಂಗಡ ಇರುವ ಪರವಾಸಿಗಳಿಗೂ ನೀಡಿರುವ ಸೌಲಭ್ಯಕ್ಕಾಗಿ ಸಂತೋಷ ಪಡಬೇಕು.</verse>
				<verse number="12">ಹತ್ತನೆಯ ಪಾಲನ್ನು ಕೊಡುವ ವರ್ಷವಾಗಿರುವ ಮೂರನೆಯ ವರ್ಷದಲ್ಲಿ ನೀವು ನಿಮ್ಮ ಎಲ್ಲಾ ಹುಟ್ಟುವಳಿಯ ಹತ್ತನೆಯ ಪಾಲನ್ನು ಪ್ರತ್ಯೇಕಿಸಿದಾಗ, ನಿಮ್ಮ ಊರುಗಳಲ್ಲಿರುವ ಲೇವಿಯರೂ ಪರದೇಶಿಗಳೂ ದಿಕ್ಕಿಲ್ಲದವರೂ ವಿಧವೆಯರೂ ಉಂಡು ತೃಪ್ತರಾಗುವಂತೆ ಅದನ್ನು ಅವರಿಗೆ ಕೊಡಬೇಕು.</verse>
				<verse number="13">ಆಗ ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ, “ನಾವು ಮೀಸಲಿಟ್ಟ ಪರಿಶುದ್ಧ ವಸ್ತುಗಳನ್ನು ಮನೆಯಿಂದ ತೆಗೆದುಕೊಂಡು ಬಂದು, ನೀವು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯರಿಗೆ, ಪರದೇಶಿಗೆ, ತಂದೆತಾಯಿ ಇಲ್ಲದವರಿಗೆ, ವಿಧವೆಯರಿಗೆ ಕೊಟ್ಟಿದ್ದೇವೆ. ನಿಮ್ಮ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ, ಮರೆಯಲೂ ಇಲ್ಲ.</verse>
				<verse number="14">ದುಃಖದ ಸಮಯದಲ್ಲಿ ಪರಿಶುದ್ಧವಾದದ್ದರಲ್ಲಿ ಏನೂ ತಿನ್ನಲಿಲ್ಲ. ಅಶುದ್ಧರಾಗಿ ಅದರಿಂದ ತೆಗೆದುಕೊಂಡು ಉಪಯೋಗಿಸಲಿಲ್ಲ. ಸತ್ತವರಿಗಾಗಿ ಅದರಲ್ಲಿ ಏನೂ ಕೊಡಲಿಲ್ಲ. ನಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳಿದ್ದೇವೆ. ನಮಗೆ ಆಜ್ಞಾಪಿಸಿದ್ದೆಲ್ಲಾ ಮಾಡಿದ್ದೇವೆ.</verse>
				<verse number="15">ಪರಲೋಕದ ನಿಮ್ಮ ಪರಿಶುದ್ಧ ನಿವಾಸದೊಳಗಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿಮ್ಮ ಜನರಾದ ಇಸ್ರಾಯೇಲರನ್ನೂ, ನೀವು ನಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಪ್ರಕಾರ, ನಮಗೆ ಕೊಟ್ಟಂಥ ಹಾಲೂ ಜೇನೂ ಹರಿಯುವ ಈ ದೇಶವನ್ನೂ ಆಶೀರ್ವದಿಸಿರಿ,” ಎಂದು ಹೇಳಬೇಕು.</verse>
				<verse number="16">ಈ ತೀರ್ಪುಗಳನ್ನೂ ನಿಯಮಗಳನ್ನೂ ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಇಂದು ಆಜ್ಞಾಪಿಸಿದ್ದಾರೆ. ಆದ್ದರಿಂದ ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು.</verse>
				<verse number="17">ನೀವು ಈ ಹೊತ್ತು, ಯೆಹೋವ ದೇವರೇ ನಮಗೆ ದೇವರು ಎಂದೂ, ಅವರ ಮಾರ್ಗಗಳಲ್ಲಿ ನಡೆದು, ಅವರು ಹೇಳಿದ ಆಜ್ಞಾವಿಧಿನಿಯಮಗಳನ್ನು ಪಾಲಿಸಿ, ಅವರ ಮಾತಿಗೆ ವಿಧೇಯರಾಗಿರುತ್ತೇವೆ ಎಂದೂ ದೃಢವಾಗಿ ಹೇಳಿದ್ದೀರಿ.</verse>
				<verse number="18">ಈ ಹೊತ್ತು ನಿಮಗೆ ಯೆಹೋವ ದೇವರು ಘೋಷಿಸಿದಂತೆ, ನೀವು ಅವರ ಜನರೂ ಅವರ ಸಂಗ್ರಹಿಸಿದ ಆಸ್ತಿಯೂ ಆಗಿದ್ದೀರೆಂದು ವಾಗ್ದಾನಮಾಡಿದ್ದಾರೆ. ನೀವು ಅವರ ಎಲ್ಲಾ ಆಜ್ಞೆಗಳನ್ನು ಪಾಲಿಸಿರಿ.</verse>
				<verse number="19">ದೇವರು ನಿರ್ಮಿಸಿದ ಎಲ್ಲಾ ದೇಶಗಳಿಗಿಂತ ಹೆಚ್ಚಾಗಿ ನಿಮ್ಮನ್ನು ಕೀರ್ತಿಯಲ್ಲಿಯೂ, ಪ್ರಸಿದ್ಧತೆಯಲ್ಲಿಯೂ, ಘನತೆಯಲ್ಲಿಯೂ, ಸ್ಥಾಪಿಸುವುದಾಗಿ ನಿಮ್ಮ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದಂತೆ ನೀವು ಅವರಿಗೆ ಪರಿಶುದ್ಧ ಜನರಾಗಬೇಕೆಂದೂ ಘೋಷಿಸಿದ್ದಾರೆ.</verse>
			</chapter>
			<chapter number="27">
				<verse number="1">ಮೋಶೆ ಮತ್ತು ಇಸ್ರಾಯೇಲಿನ ಹಿರಿಯರು ಜನರಿಗೆ, “ನಾವು ಈ ಹೊತ್ತು ನಿಮಗೆ ಆಜ್ಞಾಪಿಸುವ ಆಜ್ಞೆಗಳನ್ನೆಲ್ಲಾ ನೀವು ಅನುಸರಿಸಬೇಕು.</verse>
				<verse number="2">ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶಕ್ಕೆ ನೀವು ಯೊರ್ದನನ್ನು ದಾಟಿ ಪ್ರವೇಶಿಸುವಾಗ, ದೊಡ್ಡ ಕಲ್ಲುಗಳನ್ನು ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಿ,</verse>
				<verse number="3">ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಪ್ರಕಾರ ಅಂದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ಹಾಲೂ ಜೇನೂ ಹರಿಯುವಂಥ ದೇಶವನ್ನು ನೀವು ಪ್ರವೇಶಿಸುವಂತೆ ಯೊರ್ದನ್ ನದಿಯನ್ನು ದಾಟುವಾಗ, ಅವುಗಳ ಮೇಲೆ ಈ ನಿಯಮದ ವಾಕ್ಯಗಳನ್ನೆಲ್ಲಾ ಆ ಕಲ್ಲಿನ ಮೇಲೆ ಬರೆಯಬೇಕು.</verse>
				<verse number="4">ನೀವು ಯೊರ್ದನನ್ನು ದಾಟಿದ ಮೇಲೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಕಲ್ಲುಗಳನ್ನು ಏಬಾಲ್ ಬೆಟ್ಟದಲ್ಲಿ ನಿಲ್ಲಿಸಿ, ಅವುಗಳಿಗೆ ಗಿಲಾವು ಮಾಡಿಸಬೇಕು.</verse>
				<verse number="5">ಅಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಬೇಕು. ಕಬ್ಬಿಣದ ಉಪಕರಣವನ್ನು ನೀವು ಕಲ್ಲುಗಳ ಮೇಲೆ ಉಪಯೋಗಿಸಬಾರದು.</verse>
				<verse number="6">ನಿಮ್ಮ ದೇವರಾದ ಯೆಹೋವ ದೇವರ ಬಲಿಪೀಠವನ್ನು ಹುಟ್ಟುಕಲ್ಲುಗಳಿಂದಲೇ ಕಟ್ಟಬೇಕು. ನೀವು ಅದರ ಮೇಲೆ ನಿಮ್ಮ ದೇವರಾದ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಬೇಕು.</verse>
				<verse number="7">ಅಲ್ಲಿ ದಹನಬಲಿಗಳನ್ನೂ ಸಮಾಧಾನ ಬಲಿಗಳನ್ನೂ ಸಮರ್ಪಿಸಿ, ಸಹಭೋಜನ ಮಾಡಿ, ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.</verse>
				<verse number="8">ನೀವು ಆ ಕಲ್ಲುಗಳ ಮೇಲೆ ಈ ನಿಯಮದ ವಾಕ್ಯಗಳನ್ನೆಲ್ಲಾ ಬಹುಸ್ಪಷ್ಟವಾಗಿ ಬರೆಸಬೇಕು,” ಎಂದು ಆಜ್ಞಾಪಿಸಿದರು.</verse>
				<verse number="9">ಆಗ ಮೋಶೆಯೂ ಯಾಜಕರಾದ ಲೇವಿಯರೂ ಸಮಸ್ತ ಇಸ್ರಾಯೇಲಿನ ಸಂಗಡ ಮಾತನಾಡಿ, “ಇಸ್ರಾಯೇಲರೇ, ಶಾಂತರಾಗಿದ್ದು ಕೇಳಿರಿ. ನೀವು ಈ ಹೊತ್ತು ನಿಮ್ಮ ದೇವರಾದ ಯೆಹೋವ ದೇವರ ಜನಾಂಗವಾಗಿದ್ದೀರಿ.</verse>
				<verse number="10">ಹೀಗಿರುವುದರಿಂದ ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಆಜ್ಞೆಗಳನ್ನೂ ತೀರ್ಪುಗಳನ್ನೂ ಅನುಸರಿಸಬೇಕು,” ಎಂದು ಹೇಳಿದನು.</verse>
				<verse number="11">ಇದಲ್ಲದೆ ಮೋಶೆ ಅದೇ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನೆಂದರೆ:</verse>
				<verse number="12">“ನೀವು ಯೊರ್ದನನ್ನು ದಾಟಿದ ಮೇಲೆ ಜನರನ್ನು ಆಶೀರ್ವದಿಸುವುದಕ್ಕೆ ಗೆರಿಜೀಮ್ ಬೆಟ್ಟದಲ್ಲಿ ನಿಲ್ಲತಕ್ಕವರು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಯೋಸೇಫ, ಬೆನ್ಯಾಮೀನ್ ಮುಂತಾದವರು;</verse>
				<verse number="13">ಶಪಿಸುವುದಕ್ಕೆ ಏಬಾಲ್ ಬೆಟ್ಟದಲ್ಲಿ ನಿಲ್ಲತಕ್ಕವರು ಯಾರೆಂದರೆ ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ,” ಎಂದು ಆಜ್ಞಾಪಿಸಿ ಹೇಳಿದನು.</verse>
				<verse number="14">ಲೇವಿಯರು ಇಸ್ರಾಯೇಲ್ ಜನರೆಲ್ಲರಿಗೆ ಗಟ್ಟಿಯಾದ ಧ್ವನಿಯಿಂದ,</verse>
				<verse number="15">“ಯೆಹೋವ ದೇವರಿಗೆ ಅಸಹ್ಯವಾಗಿರುವ ವಿಗ್ರಹವನ್ನಾಗಲಿ, ಎರಕ ಹೊಯ್ದದ್ದನ್ನಾಗಲಿ ಮಾಡಿಕೊಂಡು, ಶಿಲ್ಪಿಯ ಕೈಯಿಂದ ಮಾಡಿಸಿ, ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.</verse>
				<verse number="16">ಅವರು, “ತನ್ನ ತಂದೆಯನ್ನಾಗಲಿ, ತಾಯಿಯನ್ನಾಗಲಿ ಅವಮಾನಪಡಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.</verse>
				<verse number="17">ಅವರು, “ತನ್ನ ನೆರೆಯವನ ಗಡಿ ಮೇರೆಯನ್ನು ಸರಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.</verse>
				<verse number="18">ಅವರು, “ಕಣ್ಣು ಕಾಣದವನನ್ನು ದಾರಿತಪ್ಪಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.</verse>
				<verse number="19">ಅವರು, “ಪರವಾಸಿಗೂ, ದಿಕ್ಕಿಲ್ಲದವನಿಗೂ, ವಿಧವೆಗೂ ನ್ಯಾಯಬಿಟ್ಟು ತೀರ್ಪು ಹೇಳಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.</verse>
				<verse number="20">ಅವರು, “ಮಲತಾಯಿಯ ಸಂಗಡ ಅನೈತಿಕವಾಗಿ ನಡೆದು ತನ್ನ ತಂದೆಯ ಹಾಸಿಗೆಯನ್ನು ಅವಮಾನಪಡಿಸಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.</verse>
				<verse number="21">ಅವರು, “ಪಶುಸಂಗಮ ಮಾಡಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.</verse>
				<verse number="22">ಅವರು, “ತನ್ನ ತಂದೆಯ ಮಗಳ ಸಂಗಡವಾಗಲಿ, ತಾಯಿಯ ಮಗಳ ಸಂಗಡವಾಗಲಿ ಅನೈತಿಕವಾಗಿ ನಡೆದುಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.</verse>
				<verse number="23">ಅವರು, “ತನ್ನ ಅತ್ತೆಯ ಸಂಗಡ ಅನೈತಿಕವಾಗಿ ನಡೆದುಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.</verse>
				<verse number="24">ಅವರು, “ತನ್ನ ನೆರೆಯವನನ್ನು ರಹಸ್ಯವಾಗಿ ಕೊಲೆಮಾಡಿದವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.</verse>
				<verse number="25">ಅವರು, “ನಿರಪರಾಧಿಯನ್ನು ಕೊಲ್ಲಲು ಲಂಚ ತೆಗೆದುಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.</verse>
				<verse number="26">ಅವರು, “ದೇವರ ನಿಯಮದ ಈ ಮಾತುಗಳನ್ನು ಸನ್ಮಾನಿಸಿ ಕೈಗೊಳ್ಳದೆ ಇರುವವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.</verse>
			</chapter>
			<chapter number="28">
				<verse number="1">ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಭೂಲೋಕದ ಎಲ್ಲಾ ಜನಾಂಗಗಳಿಗಿಂತ ಉನ್ನತ ಸ್ಥಿತಿಯಲ್ಲಿರಿಸುವರು.</verse>
				<verse number="2">ನೀವು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯವನ್ನು ಕೇಳಿ ಪಾಲಿಸಿದರೆ, ಈ ಎಲ್ಲಾ ಆಶೀರ್ವಾದಗಳು ನಿಮ್ಮ ಮೇಲೆ ಬಂದು, ನಿಮ್ಮೊಂದಿಗಿರುವವು:</verse>
				<verse number="3">ಪಟ್ಟಣದಲ್ಲಿ ನಿಮಗೆ ಆಶೀರ್ವಾದ, ಹೊಲದಲ್ಲಿ ನಿಮಗೆ ಆಶೀರ್ವಾದ,</verse>
				<verse number="4">ನಿಮ್ಮ ಸಂತಾನಕ್ಕೂ ನಿಮ್ಮ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ.</verse>
				<verse number="5">ನಿಮ್ಮ ಬುಟ್ಟಿಗಳಿಗೂ, ಹಿಟ್ಟನ್ನು ನಾದುವ ಪಾತ್ರೆಗೂ ಆಶೀರ್ವಾದ.</verse>
				<verse number="6">ನೀವು ಕೆಲಸಕ್ಕೆ ಹೊರಡುವಾಗಲೂ ನಿಮಗೆ ಆಶೀರ್ವಾದ, ಬರುವಾಗಲೂ ನಿಮಗೆ ಆಶೀರ್ವಾದ.</verse>
				<verse number="7">ನಿಮಗೆ ವಿರೋಧವಾಗಿ ಏಳುವ ನಿಮ್ಮ ಶತ್ರುಗಳನ್ನು ಯೆಹೋವ ದೇವರು ನಿಮ್ಮ ಮುಂದೆಯೇ ಸೋಲಿಸಿಬಿಡುವರು. ಅವರು ಒಂದೇ ಮಾರ್ಗದಲ್ಲಿ ನಿಮಗೆ ವಿರೋಧವಾಗಿ ಹೊರಟು ಬಂದರೂ, ಏಳು ಮಾರ್ಗಗಳಿಂದ ಓಡಿಹೋಗುವರು.</verse>
				<verse number="8">ನಿಮ್ಮ ಕಣಜಗಳಲ್ಲಿಯೂ, ನೀವು ಕೈಹಾಕುವ ಎಲ್ಲಾದರಲ್ಲಿಯೂ ನಿಮಗೆ ಆಶೀರ್ವಾದ ಬರುವಂತೆ ಯೆಹೋವ ದೇವರು ಅಪ್ಪಣೆ ಕೊಡುವರು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಡುವ ದೇಶದಲ್ಲಿ ನಿಮ್ಮನ್ನು ಆಶೀರ್ವದಿಸುವರು.</verse>
				<verse number="9">ನೀವು ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಪಾಲಿಸಿ, ಅವರ ಮಾರ್ಗಗಳಲ್ಲಿ ನಡೆದರೆ, ಯೆಹೋವ ದೇವರು ನಿಮಗೆ ಪ್ರಮಾಣ ಮಾಡಿದಂತೆ ನಿಮ್ಮನ್ನು ತಮಗೆ ಮೀಸಲಾದ ಪರಿಶುದ್ಧ ಜನರನ್ನಾಗಿ ಸ್ಥಾಪಿಸುವರು.</verse>
				<verse number="10">ಆಗ ಭೂಲೋಕದ ಜನರೆಲ್ಲರೂ, ನೀವು ಯೆಹೋವ ದೇವರ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.</verse>
				<verse number="11">ನಿಮಗೆ ಕೊಡುತ್ತೇನೆಂದು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಯೆಹೋವ ದೇವರು ಭೂಮಿಯ ಮೇಲೆ ನಿಮ್ಮನ್ನು ಸಂತಾನ, ಪಶು ಮತ್ತು ಕೃಷಿ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವರು.</verse>
				<verse number="12">ಯೆಹೋವ ದೇವರು ಆಕಾಶವೆಂಬ ತಮ್ಮ ಒಳ್ಳೆಯ ಉಗ್ರಾಣವನ್ನು ನಿಮಗೆ ತೆರೆದು, ನಿಮ್ಮ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು, ನಿಮ್ಮ ಕೈಕೆಲಸವನ್ನೆಲ್ಲಾ ಆಶೀರ್ವದಿಸುವರು. ನೀವು ಅನೇಕ ಜನಾಂಗಗಳಿಗೆ ಸಾಲಕೊಡುವಿರೇ ಹೊರತು ಸಾಲ ತೆಗೆದುಕೊಳ್ಳುವುದಿಲ್ಲ.</verse>
				<verse number="13">ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ನೀವು ಕೇಳಿ ಕಾಪಾಡಿ ಕೈಗೊಂಡರೆ, ಅವರು ಇತರರಿಗೆ ನಿಮ್ಮನ್ನು ಅಧೀನಮಾಡದೆ, ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವರು. ನೀವು ಎಲ್ಲರಿಗಿಂತಲೂ ಮೇಲಿನವರಾಗುವಿರೇ ಹೊರತು ಕೆಳಗಿನವರಾಗಿ ಇರುವುದಿಲ್ಲ.</verse>
				<verse number="14">ಹೀಗಿರುವುದರಿಂದ ನೀವು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಅನುಸರಿಸಿ ನಡೆಯದಂತೆ, ನಾನು ಇಂದು ನಿಮಗೆ ಆಜ್ಞಾಪಿಸುವ ಈ ಮಾತುಗಳನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ತಿರುಗಬಾರದು.</verse>
				<verse number="15">ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳನ್ನು ಕೈಗೊಳ್ಳದೇ ಹೋದರೆ, ಈ ಎಲ್ಲಾ ಶಾಪಗಳು ನಿಮ್ಮ ಮೇಲೆ ಬಂದು ನಿಮ್ಮನ್ನು ಹಿಡಿದುಕೊಳ್ಳುವವು:</verse>
				<verse number="16">ನಿಮಗೆ ಪಟ್ಟಣದಲ್ಲಿಯೂ ಶಾಪ, ಹೊಲದಲ್ಲಿಯೂ ನಿಮಗೆ ಶಾಪ.</verse>
				<verse number="17">ನಿಮ್ಮ ಬುಟ್ಟಿಗಳಿಗೂ, ಹಿಟ್ಟನ್ನು ನಾದುವ ಪಾತ್ರೆಗೂ ಶಾಪ.</verse>
				<verse number="18">ನಿಮ್ಮ ಗರ್ಭದ ಫಲಕ್ಕೂ ಪಶುಗಳ ಹಿಂಡಿಗೂ, ಕುರಿಗಳ ಮಂದೆಗಳಿಗೂ ಶಾಪ.</verse>
				<verse number="19">ನೀವು ಕೆಲಸಕ್ಕೆ ಹೊರಡುವಾಗಲೂ ನಿಮಗೆ ಶಾಪ, ಬರುವಾಗಲೂ ಶಾಪ.</verse>
				<verse number="20">ನೀವು ನಿಮ್ಮ ಯೆಹೋವ ದೇವರನ್ನು ಬಿಟ್ಟ ದುಷ್ಟಕ್ರಿಯೆಯ ನಿಮಿತ್ತ, ಯೆಹೋವ ದೇವರು ನೀವು ಬೇಗ ನಾಶವಾಗುವವರೆಗೂ ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ನಿಮಗೆ ಶಾಪ, ಗಲಿಬಿಲಿ ಹಾಗು ಗದರಿಕೆ ಮುಂತಾದವುಗಳನ್ನು ಉಂಟುಮಾಡುವರು.</verse>
				<verse number="21">ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವವರೆಗೆ ಯೆಹೋವ ದೇವರು ನಿಮಗೆ ವ್ಯಾಧಿಯು ಅಂಟಿಕೊಳ್ಳುವಂತೆ ಮಾಡುವರು.</verse>
				<verse number="22">ಯೆಹೋವ ದೇವರು ಕ್ಷಯರೋಗದಿಂದಲೂ, ಚಳಿಜ್ವರದಿಂದಲೂ, ಉರಿವಾತದಿಂದಲೂ, ಉಷ್ಣಜ್ವರದಿಂದಲೂ ಕುಗ್ಗಿಸಿ, ದೇಶವನ್ನು ಕ್ಷಾಮದಿಂದಲೂ, ಬೆಳೆಯನ್ನು ಕಾಡಿನ ಬಿಸಿಗಾಳಿಯಿಂದಲೂ ಬಾಧಿಸುವರು. ನೀವು ನಾಶವಾಗುವ ತನಕ ಅವು ನಿಮ್ಮನ್ನು ಹಿಂದಟ್ಟಿಬರುವವು.</verse>
				<verse number="23">ನಿಮ್ಮ ತಲೆಯ ಮೇಲಿರುವ ಆಕಾಶವು ಕಂಚಿನಂತೆಯೂ ಕೆಳಗಿರುವ ಭೂಮಿ ಬೆಳೆಕೊಡದೆ ಕಬ್ಬಿಣದಂತೆಯೂ ಇರುವವು.</verse>
				<verse number="24">ಯೆಹೋವ ದೇವರು ನಿಮ್ಮ ದೇಶದಲ್ಲಿ ಮಳೆಗೆ ಬದಲಾಗಿ ಹುಡಿಯೂ ಧೂಳೂ ಆಗುವಂತೆ ಮಾಡುವರು. ನೀವು ನಾಶವಾಗುವವರೆಗೆ ಅದು ಆಕಾಶದಿಂದ ನಿಮ್ಮ ಮೇಲೆ ಸುರಿಯುವುದು.</verse>
				<verse number="25">ಯೆಹೋವ ದೇವರು ನಿಮ್ಮನ್ನು ನಿಮ್ಮ ಶತ್ರುಗಳ ಮುಂದೆ ಸೋಲಿಸಿಬಿಡುವರು. ನೀವು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ದಾಳಿಮಾಡಲು ಹೊರಟು, ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗುವಿರಿ. ಭೂಮಿಯ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವವು.</verse>
				<verse number="26">ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುದು. ಯಾರೂ ಅವುಗಳನ್ನು ಬೆದರಿಸಿ ಓಡಿಸುವುದಿಲ್ಲ.</verse>
				<verse number="27">ಯೆಹೋವ ದೇವರು ನಿಮ್ಮನ್ನು ಈಜಿಪ್ಟನ್ನು ಬಾಧಿಸುವಂತೆ ಹುಣ್ಣುಗಳಿಂದಲೂ, ಮೂಲವ್ಯಾಧಿಯಿಂದಲೂ, ಕಜ್ಜಿಯಿಂದಲೂ, ಇಸುಬಿನಿಂದಲೂ ನೀವು ವಾಸಿಯಾಗದ ರೋಗಗಳಿಂದ ನಿಮ್ಮನ್ನು ಬಾಧಿಸುವರು.</verse>
				<verse number="28">ಯೆಹೋವ ದೇವರು ನಿಮ್ಮನ್ನು ಹುಚ್ಚುತನದಿಂದಲೂ ಕುರುಡುತನದಿಂದಲೂ ಹೃದಯದ ವಿಸ್ಮಯದಿಂದಲೂ ಕಾಡುವರು.</verse>
				<verse number="29">ಕಣ್ಣು ಕಾಣದವನು ಕತ್ತಲಲ್ಲಿ ತಡವಾಡುವಂತೆ ಮಧ್ಯಾಹ್ನದಲ್ಲಿ ತಡವಾಡುತ್ತಾ ಇರುವಿರಿ, ನಿಮ್ಮ ಮಾರ್ಗಗಳಲ್ಲಿ ಸಫಲವಾಗುವುದಿಲ್ಲ. ನೀವು ಯಾವಾಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ, ಸುಲಿಗೆಯನ್ನೂ ಅನುಭವಿಸುವವರಾಗುವಿರಿ.</verse>
				<verse number="30">ನೀವು ಮದುವೆಮಾಡಿಕೊಳ್ಳಲು ನಿಶ್ಚಯಿಸಿಕೊಂಡ ಮಹಿಳೆಯನ್ನು ಮತ್ತೊಬ್ಬನು ಮಾನಭಂಗಗೊಳಿಸುವನು. ಮನೆಯನ್ನು ಕಟ್ಟಿದರೆ, ಅದರಲ್ಲಿ ವಾಸಮಾಡುವುದಿಲ್ಲ. ದ್ರಾಕ್ಷಿತೋಟವನ್ನು ನೆಟ್ಟರೆ, ಅದರ ಫಲ ನಿಮಗೆ ದೊರೆಯುವುದಿಲ್ಲ.</verse>
				<verse number="31">ನಿಮ್ಮ ದನಗಳನ್ನು ನಿಮ್ಮ ಕಣ್ಣು ಮುಂದೆಯೇ ಕೊಯ್ಯುವರು, ಆದರೆ ನೀವು ಅದರ ಮಾಂಸ ತಿನ್ನುವುದಿಲ್ಲ. ನಿಮ್ಮ ಕತ್ತೆಯನ್ನು ನಿಮ್ಮ ಕಣ್ಣ ಮುಂದೆಯೇ ಬಲಾತ್ಕಾರದಿಂದ ತೆಗೆದುಕೊಂಡು ಹೋಗುವರು. ಅದು ನಿಮಗೆ ಮತ್ತೆ ಸಿಕ್ಕುವುದಿಲ್ಲ. ನಿಮ್ಮ ಕುರಿಗಳು ನಿಮ್ಮ ಶತ್ರುವಿಗೆ ಕೊಡಲಾಗುವುದು. ಅವುಗಳನ್ನು ಬಿಡಿಸುವುದಕ್ಕೆ ಯಾರೂ ಇರುವುದಿಲ್ಲ.</verse>
				<verse number="32">ನಿಮ್ಮ ಪುತ್ರಪುತ್ರಿಯರು ಬೇರೆ ಜನರಿಗೆ ವಶಪಡಿಸಿರಲು, ನೀವು ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಇರುವಿರಿ. ಆದರೆ ಅವರನ್ನು ಕಾಪಾಡಲು ನಿಮ್ಮ ಕೈಯಿಂದ ಸಾಧ್ಯವಾಗದೆ ಇರುವುದು.</verse>
				<verse number="33">ನಿಮ್ಮ ಭೂಮಿಯ ಫಲವನ್ನೂ, ನಿಮ್ಮ ಎಲ್ಲಾ ಆದಾಯವನ್ನೂ ನಿಮ್ಮನ್ನರಿಯದ ಜನರು ತಿಂದುಬಿಡುವರು. ನೀವು ಯಾವಾಗಲೂ ಬಲಾತ್ಕಾರವನ್ನೂ, ಸಂಕಟವನ್ನೂ ಅನುಭವಿಸುವಿರಿ.</verse>
				<verse number="34">ನಿಮ್ಮ ಕಣ್ಣಮುಂದೆ ನಡೆಯುವ ಘಟನೆಗಳನ್ನು ನೋಡಿ ಹುಚ್ಚರಾಗುವಿರಿ.</verse>
				<verse number="35">ಯೆಹೋವ ದೇವರು ನಿಮ್ಮನ್ನು ಮೊಣಕಾಲುಗಳಲ್ಲಿಯೂ, ತೊಡೆಗಳಲ್ಲಿಯೂ ವಾಸಿಯಾಗದ ಕೆಟ್ಟ ಉರಿ ಹುಣ್ಣಿನಿಂದ ಅಂಗಾಲು ಮೊದಲ್ಗೊಂಡು ನೆತ್ತಿಯವರೆಗೆ ಹೊಡೆಯುವರು.</verse>
				<verse number="36">ಯೆಹೋವ ದೇವರು ನಿಮ್ಮನ್ನೂ, ನೀವು ನಿಮ್ಮ ಮೇಲೆ ನೇಮಿಸಿಕೊಳ್ಳುವ ಅರಸನನ್ನೂ, ನೀವೂ, ನಿಮ್ಮ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗುವಂತೆ ಮಾಡುವರು. ಅಲ್ಲಿ ಮರವೂ, ಕಲ್ಲೂ ಆಗಿರುವ ಬೇರೆ ದೇವರುಗಳನ್ನೂ ನೀವು ಪೂಜಿಸುವಿರಿ.</verse>
				<verse number="37">ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಚೆದರಿಸುವ ಎಲ್ಲಾ ಜನಾಂಗಗಳಲ್ಲಿ ನೀವು ವಿಸ್ಮಯಕ್ಕೂ, ಗಾದೆಗೂ, ಹಾಸ್ಯಕ್ಕೂ ಗುರಿಯಾಗುವಿರಿ.</verse>
				<verse number="38">ಬಹಳ ಬೀಜವನ್ನು ಹೊಲದಲ್ಲಿ ಬಿತ್ತಿದರೂ ಸ್ವಲ್ಪವೇ ಬೆಳೆ. ಏಕೆಂದರೆ ಮಿಡತೆ ಅದನ್ನು ತಿಂದುಬಿಡುವುದು;</verse>
				<verse number="39">ದ್ರಾಕ್ಷಿತೋಟವನ್ನು ನೆಟ್ಟು ಕಾಪಾಡುವಿರಿ, ಆದರೆ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ ಮತ್ತು ಹಣ್ಣು ಕೂಡಿಸುವುದಿಲ್ಲ, ಏಕೆಂದರೆ ಹುಳುಗಳು ಅದನ್ನು ತಿಂದುಬಿಡುವುವು;</verse>
				<verse number="40">ಓಲಿವ್ ಮರಗಳು ನಿಮ್ಮ ಎಲ್ಲಾ ಮೇರೆಗಳಲ್ಲಿ ಇರುವುವು. ಆದರೆ ಅವುಗಳ ಕಾಯಿಗಳು ಉದುರುವುದರಿಂದ ನಿಮ್ಮ ಉಪಯೋಗಕ್ಕೆ ಎಣ್ಣೆ ಸಿಗದು.</verse>
				<verse number="41">ನೀವು ಪುತ್ರಪುತ್ರಿಯರನ್ನು ಪಡೆಯುವಿರಿ, ಆದರೆ ಅವರ ಕೂಡ ಸಂತೋಷಿಸುವುದಿಲ್ಲ. ಏಕೆಂದರೆ ಅವರು ಸೆರೆಯಾಗಿ ಹೋಗುವರು.</verse>
				<verse number="42">ನಿಮ್ಮ ಎಲ್ಲಾ ಮರಗಳನ್ನೂ, ನಿಮ್ಮ ಹೊಲದ ಪೈರನ್ನೂ ಮಿಡತೆ ತಿಂದುಬಿಡುವುದು.</verse>
				<verse number="43">ನಿಮ್ಮ ಮಧ್ಯದಲ್ಲಿರುವ ಪರದೇಶದವರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುವರು. ನೀವಾದರೋ ಕಡಿಮೆಯಾಗುತ್ತಾ ಹೀನಸ್ಥಿತಿಗೆ ಬರುವಿರಿ.</verse>
				<verse number="44">ಅವರು ನಿಮಗೆ ಸಾಲ ಕೊಡುವರು ಆದರೆ ನೀವು ಅವರಿಗೆ ಸಾಲಕೊಡುವ ಸ್ಥಿತಿಯಲ್ಲಿ ಇರುವುದಿಲ್ಲ. ಅವರು ನಿಮಗೆ ಶಿರಸ್ಸಾಗುವರು ಆದರೆ ನೀವು ಅವರಿಗೆ ಅಧೀನರಾಗುವಿರಿ.</verse>
				<verse number="45">ಇದಲ್ಲದೆ ನೀವು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯವನ್ನು ಕೇಳದೆ ಅವರು ನಿಮಗೆ ಆಜ್ಞಾಪಿಸಿದ ಆಜ್ಞೆಗಳನ್ನೂ ನಿಯಮಗಳನ್ನೂ ಕೈಗೊಳ್ಳದೆ ಇದ್ದುದರಿಂದ, ಈ ಶಾಪಗಳೆಲ್ಲಾ ನಿಮ್ಮ ಮೇಲೆ ಬಂದು, ನಿಮ್ಮನ್ನು ನಾಶಮಾಡುವವರೆಗೂ ನಿಮ್ಮನ್ನು ಹಿಂದಟ್ಟುವುವು.</verse>
				<verse number="46">ಅವು ನಿಮ್ಮ ಮೇಲೂ ನಿಮ್ಮ ಸಂತತಿಯ ಮೇಲೂ ಯಾವಾಗಲೂ ಗುರುತೂ ಅದ್ಭುತವೂ ಆಗಿರುವುವು.</verse>
				<verse number="47">ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸಂತೋಷದಿಂದಲೂ ಹರ್ಷದಿಂದಲೂ ಸೇವೆಮಾಡದೆ ಹೋದಿರಿ.</verse>
				<verse number="48">ಆದುದರಿಂದ ಹಸಿವೆಯಲ್ಲಿ, ದಾಹದಲ್ಲಿ, ಬಡತನದಲ್ಲಿ ಬಟ್ಟೆಬರೆ ಏನೂ ಇಲ್ಲದೆ, ಯೆಹೋವ ದೇವರು ನಿಮ್ಮ ಮೇಲೆ ಕಳುಹಿಸುವ ಆ ಶತ್ರುಗಳಿಗೇ ನೀವು ಸೇವಕರಾಗಬೇಕಾಗುವುದು. ಯೆಹೋವ ದೇವರು ನಿಮ್ಮನ್ನು ನಾಶಮಾಡುವವರೆಗೆ ಕಬ್ಬಿಣದ ನೊಗವನ್ನು ನಿಮ್ಮ ಮೇಲೆ ಹೊರಿಸುವರು.</verse>
				<verse number="49">ಯೆಹೋವ ದೇವರು ದೂರದಿಂದ ಅಂದರೆ, ಭೂಮಿಯ ಕೊನೆಯಿಂದ ರಣಹದ್ದು ಹೇಗೆ ಹಾರಿಬರುವುದೋ ಹಾಗೆಯೇ, ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವನ್ನು ನಿಮ್ಮ ಮೇಲೆ ಬರುವಂತೆ ಮಾಡುವರು.</verse>
				<verse number="50">ಆ ಜನಾಂಗದವರು ಕ್ರೂರಮುಖವುಳ್ಳವರು. ನಿಮ್ಮನ್ನು ವೃದ್ಧರೆಂದು ಮರ್ಯಾದೆ ತೋರಿಸುವದಿಲ್ಲ, ಚಿಕ್ಕವರೆಂದು ದಯೆಯೂ ತೋರಿಸುವುದಿಲ್ಲ.</verse>
				<verse number="51">ಅವರು ನಿಮ್ಮ ಪಶುಗಳ ಫಲವನ್ನೂ ನಿಮ್ಮ ಭೂಮಿಯ ಫಲವನ್ನೂ ನೀವು ನಾಶವಾಗುವವರೆಗೆ ತಿಂದುಬಿಡುವರು. ಅವರು ಧಾನ್ಯವನ್ನೂ, ಹೊಸ ದ್ರಾಕ್ಷಾರಸವನ್ನೂ, ಓಲಿವ್ ಎಣ್ಣೆಯನ್ನೂ, ಪಶುಗಳ ಅಭಿವೃದ್ಧಿಯನ್ನೂ, ಕುರಿಗಳ ಮಂದೆಗಳನ್ನೂ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.</verse>
				<verse number="52">ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ನಿಮ್ಮ ದೇಶದಲ್ಲೆಲ್ಲಾ ನಿಮ್ಮ ಎಲ್ಲಾ ಊರುಗಳಲ್ಲಿ ನಿಮಗೆ ಮುತ್ತಿಗೆ ಹಾಕುವರು. ನೀವು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿಮ್ಮ ಗೋಡೆಗಳನ್ನು ಕೆಡವಿಬಿಡುವರು.</verse>
				<verse number="53">ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವುದರಿಂದ ನೀವು ನಿಮ್ಮ ಗರ್ಭದ ಫಲವನ್ನು ಅಂದರೆ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಪುತ್ರಪುತ್ರಿಯರ ಮಾಂಸವನ್ನು ತಿನ್ನುವಿರಿ.</verse>
				<verse number="54">ನಿಮ್ಮಲ್ಲಿರುವ ಅತ್ಯಂತ ಸೌಮ್ಯಸ್ವಭಾವದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಸಹ ತನ್ನ ಸ್ವಂತ ಸಹೋದರ ಅಥವಾ ಅವನು ಪ್ರೀತಿಸುವ ಹೆಂಡತಿ ಅಥವಾ ಉಳಿದಿರುವ ಮಕ್ಕಳ ಮೇಲೆ ಅನುಕಂಪ ತೋರಿಸುವುದಿಲ್ಲ.</verse>
				<verse number="55">ಶತ್ರುಗಳು ನಿಮ್ಮ ಎಲ್ಲಾ ಪಟ್ಟಣಗಳಿಗೆ ಮುತ್ತಿಗೆ ಹಾಕಿ, ನಿಮ್ಮನ್ನು ಇಕ್ಕಟ್ಟಿಗೆ ಸಿಕ್ಕಿಸುವ ಕಾಲದಲ್ಲಿ ಅವನು ತನಗೆ ತಿನ್ನಲಿಕ್ಕೆ ಏನೂ ಸಿಗುವುದಿಲ್ಲ ಅಂದುಕೊಂಡು, ತನ್ನ ಮಕ್ಕಳ ಮಾಂಸವನ್ನು ಇತರರಿಗೆ ಕೊಡದೆ ತಿನ್ನುವನು.</verse>
				<verse number="56">ನಿಮ್ಮಲ್ಲಿರುವ ಅತ್ಯಂತ ಸೌಮ್ಯಸ್ವಭಾವದವಳೂ, ಬಹಳ ಸೂಕ್ಷ್ಮ ಗುಣವುಳ್ಳವಳೂ, ನೆಲಕ್ಕೆ ಅಂಗಾಲನ್ನು ಸಹ ಇಡದ ಮಹಿಳೆಯು, ತನ್ನ ಮಗ್ಗುಲಲ್ಲಿರುವ ಗಂಡನ ಕಡೆಗೂ ಹೆತ್ತ ಪುತ್ರಪುತ್ರಿಯರ ಕಡೆಗೂ ಕಠಿಣವಾಗಿರುವಳು.</verse>
				<verse number="57">ಅವಳು ಕೊರತೆಯಲ್ಲಿಯೂ, ಮುತ್ತಿಗೆಯಲ್ಲಿಯೂ, ಶತ್ರು ನಿಮಗೆ ನಿಮ್ಮ ಪಟ್ಟಣಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ, ತನ್ನ ಮಕ್ಕಳನ್ನು ಗುಪ್ತವಾಗಿ ತಿಂದುಬಿಡುವಳು.</verse>
				<verse number="58">ನಿಮ್ಮ ದೇವರಾದ ಯೆಹೋವ ದೇವರೆಂಬ ಈ ಘನವುಳ್ಳ ಹೆಸರಿಗೆ ನೀವು ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನಿಯಮದ ಮಾತುಗಳನ್ನು ಅಲಕ್ಷಿಸಿ, ತಪ್ಪು ದಾರಿ ಹಿಡಿದರೆ,</verse>
				<verse number="59">ಯೆಹೋವ ದೇವರು ನಿಮಗೂ ನಿಮ್ಮ ಸಂತತಿಗೂ ಭಯಂಕರವಾದ ಉಪದ್ರವಗಳನ್ನು ಬರಮಾಡುವರು; ಅವು ಕಠಿಣವಾದ ಮತ್ತು ದೀರ್ಘಕಾಲದ ಬಾಧೆಗಳೂ ಘೋರವಾದ ಮತ್ತು ಗಂಭೀರವಾದ ರೋಗಗಳಾಗಿರುವವು.</verse>
				<verse number="60">ಇದಲ್ಲದೆ ನೀವು ಹೆದರಿಕೊಳ್ಳುತ್ತಿದ್ದ ಈಜಿಪ್ಟಿನ ರೋಗಗಳನ್ನೆಲ್ಲಾ ದೇವರು ತಿರುಗಿ ನಿಮ್ಮ ಮೇಲೆ ಬರಮಾಡುವರು; ಅವು ನಿಮ್ಮನ್ನು ಅಂಟಿಕೊಳ್ಳುವವು.</verse>
				<verse number="61">ಈ ನಿಯಮದ ಪುಸ್ತಕದಲ್ಲಿ ಬರೆಯದ ರೋಗಗಳನ್ನೂ ಬೇನೆಗಳನ್ನೂ ನೀವು ಪೂರ್ಣ ನಾಶವಾಗುವವರೆಗೆ ಯೆಹೋವ ದೇವರು ನಿಮ್ಮ ಮೇಲೆ ತರುವರು.</verse>
				<verse number="62">ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೇ ಹೋದದ್ದರಿಂದ, ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯಾತರಾಗಿರುವ ನೀವು ಸ್ವಲ್ಪ ಮಂದಿಯಾಗಿ ಉಳಿಯುವಿರಿ.</verse>
				<verse number="63">ಯೆಹೋವ ದೇವರು ಹೇಗೆ ನಿಮಗೆ ಸಮೃದ್ಧಿಯನ್ನು ಕೊಡುವುದಕ್ಕೂ ನಿಮ್ಮನ್ನು ಹೆಚ್ಚಿಸುವುದಕ್ಕೂ ನಿಮಗೋಸ್ಕರ ಸಂತೋಷಿಸಿದರೋ, ಹಾಗೆಯೇ ಯೆಹೋವ ದೇವರು ನಿಮ್ಮನ್ನು ಕೆಡಿಸಿ, ನಾಶಮಾಡುವುದಕ್ಕೂ ನಿಮಗೆ ವಿರೋಧವಾಗಿ ಸಂತೋಷಿಸುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಿಂದಲೂ ನಿಮ್ಮನ್ನು ಕಿತ್ತುಹಾಕುವರು.</verse>
				<verse number="64">ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯವರೆಗೂ ಎಲ್ಲಾ ಜನಾಂಗಗಳಲ್ಲಿ ಚದರಿಸುವರು. ಅಲ್ಲಿ ನೀವೂ ನಿಮ್ಮ ಪಿತೃಗಳು ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಆರಾಧಿಸುವಿರಿ.</verse>
				<verse number="65">ಆ ಜನಾಂಗಗಳಲ್ಲಿ ನಿಮಗೆ ವಿಶ್ರಾಂತಿ ದೊರೆಯುವುದಿಲ್ಲ. ಸ್ವಲ್ಪ ಹೊತ್ತು ಅಂಗಾಲಿಡುವುದಕ್ಕೂ ನಿಮಗೆ ಸ್ಥಳಸಿಕ್ಕುವುದಿಲ್ಲ. ಅಲ್ಲಿ ಯೆಹೋವ ದೇವರು ನಿಮಗೆ ನಡುಗುವ ಹೃದಯವನ್ನೂ ಕ್ಷೀಣಿಸುವ ಕಣ್ಣುಗಳನ್ನೂ ಕುಂದುವ ಪ್ರಾಣವನ್ನೂ ಕೊಡುವರು.</verse>
				<verse number="66">ಬದುಕುವೆವೋ ಇಲ್ಲವೋ ಎಂಬುದಾಗಿ ಅನುಮಾನಪಟ್ಟು ನೀವು ರಾತ್ರಿ ಹಗಲು ಜೀವದ ಮೇಲೆ ನಂಬಿಕೆ ಇಲ್ಲದೆ ಹೆದರಿಕೊಳ್ಳುವಿರಿ.</verse>
				<verse number="67">ನಿಮ್ಮ ಹೃದಯದಲ್ಲಿನ ಪ್ರಾಣಭೀತಿ, ಹೆದರಿಕೆಯ ನಿಮಿತ್ತವೂ ನಿಮ್ಮ ಕಣ್ಣುಗಳು ನೋಡುವ ಭಯಂಕರ ನೋಟದಿಂದ ನೀವು ಮುಂಜಾನೆಯಲ್ಲಿ, “ಸಂಜೆ ಆಗಬೇಕು,” ಎನ್ನುವಿರಿ. ಸಂಜೆಯಲ್ಲಿ, “ಮುಂಜಾನೆ ಆಗಬೇಕು,” ಎನ್ನುವಿರಿ.</verse>
				<verse number="68">ಇದಲ್ಲದೆ, ಯೆಹೋವ ದೇವರು, ನೀವು ಇನ್ನು ಮೇಲೆ ನೋಡುವುದಿಲ್ಲ ಎಂದು ಹೇಳಿದ ದಾರಿಯಲ್ಲಿಯೇ ಹಡಗುಗಳಲ್ಲಿ ಜನರು ನಿಮ್ಮನ್ನು ಈಜಿಪ್ಟಿಗೆ ತಿರುಗಿ ಬರಮಾಡುವರು. ನಿಮ್ಮನ್ನು ಅಲ್ಲಿ ದಾಸರಾಗಿಯೂ ದಾಸಿಯರಾಗಿಯೂ ನಿಮ್ಮ ಶತ್ರುಗಳಿಗೆ ಮಾರಿಕೊಳ್ಳಬೇಕೆಂದಿದ್ದರೂ, ಕೊಂಡುಕೊಳ್ಳುವವರು ಇರುವುದಿಲ್ಲ.</verse>
			</chapter>
			<chapter number="29">
				<verse number="1">ಯೆಹೋವ ದೇವರು ಹೋರೇಬಿನಲ್ಲಿ ಇಸ್ರಾಯೇಲರ ಸಂಗಡ ಮಾಡಿದ ಒಡಂಬಡಿಕೆ ಅಲ್ಲದೆ ಅವರು ಮೋವಾಬ್ ದೇಶದಲ್ಲಿ ಇಸ್ರಾಯೇಲರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ಮಾತುಗಳು ಇವೇ:</verse>
				<verse number="2">ಮೋಶೆಯು ಎಲ್ಲಾ ಇಸ್ರಾಯೇಲರನ್ನು ಕರೆದು ಅವರಿಗೆ ಹೀಗೆ ಹೇಳಿದನು: ಯೆಹೋವ ದೇವರು ಈಜಿಪ್ಟ್ ದೇಶದಲ್ಲಿ ನಿಮ್ಮ ಕಣ್ಣು ಮುಂದೆಯೇ ಫರೋಹನಿಗೂ ಅವನ ಎಲ್ಲಾ ಸೇವಕರಿಗೂ ಅವನ ಎಲ್ಲಾ ದೇಶಕ್ಕೂ ಮಾಡಿದವುಗಳನ್ನೆಲ್ಲಾ ನೋಡಿದ್ದೀರಿ.</verse>
				<verse number="3">ಆ ದೊಡ್ಡ ಪರಿಶೋಧನೆಗಳನ್ನೂ ಆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ನಿಮ್ಮ ಕಣ್ಣಾರೆ ನೋಡಿದ್ದೀರಿ.</verse>
				<verse number="4">ಆದರೂ ಯೆಹೋವ ದೇವರು ಇಂದಿನವರೆಗೂ ತಿಳಿದುಕೊಳ್ಳುವ ಹೃದಯವನ್ನೂ ನೋಡುವ ಕಣ್ಣುಗಳನ್ನೂ ಕೇಳುವ ಕಿವಿಗಳನ್ನೂ ನಿಮಗೆ ಕೊಡಲಿಲ್ಲವಲ್ಲ!</verse>
				<verse number="5">“ನಾನು ನಲವತ್ತು ವರ್ಷ ನಿಮ್ಮನ್ನು ಮರುಭೂಮಿಯಲ್ಲಿ ನಡೆಸಿದೆನು. ನಿಮ್ಮ ಮೇಲಿರುವ ವಸ್ತ್ರಗಳು ಹರಿಯಲಿಲ್ಲ. ನಿಮ್ಮ ಪಾದಗಳಲ್ಲಿದ್ದ ಕೆರವಾಗಲಿ ಸವೆದುಹೋಗಲಿಲ್ಲ.</verse>
				<verse number="6">ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಯೆಹೋವ ದೇವರೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.”</verse>
				<verse number="7">ನೀವು ಈ ಸ್ಥಳಕ್ಕೆ ಬಂದಾಗ, ಹೆಷ್ಬೋನಿನ ಅರಸನಾದ ಸೀಹೋನನೂ, ಬಾಷಾನಿನ ಅರಸನಾದ ಓಗನೂ ನಮ್ಮೆದುರಿಗೆ ಯುದ್ಧಕ್ಕೆ ಹೊರಟರು. ನಾವು ಅವರನ್ನು ಸೋಲಿಸಿ,</verse>
				<verse number="8">ಅವರ ದೇಶವನ್ನು ತೆಗೆದುಕೊಂಡು ರೂಬೇನ್ಯರಿಗೂ ಗಾದನವರಿಗೂ ಮನಸ್ಸೆಯ ಅರ್ಧ ಗೋತ್ರಕ್ಕೂ ಸೊತ್ತಾಗಿ ಕೊಟ್ಟೆವು.</verse>
				<verse number="9">ಹೀಗಿರುವುದರಿಂದ ನೀವು ಮಾಡುವ ಎಲ್ಲದರಲ್ಲಿಯೂ ಸಫಲವಾಗುವಂತೆ ಈ ಒಡಂಬಡಿಕೆಯ ಮಾತುಗಳನ್ನು ಕೇಳಿ ನಡೆಯಬೇಕು.</verse>
				<verse number="10">ನೀವೆಲ್ಲರು ಈ ಹೊತ್ತು ನಿಮ್ಮ ದೇವರಾದ ಯೆಹೋವ ದೇವರ ಮುಂದೆ ನಿಂತಿದ್ದೀರಿ. ನಿಮ್ಮ ಗೋತ್ರಗಳ ಮುಖ್ಯಸ್ಥರೂ ಹಿರಿಯರೂ ಅಧಿಕಾರಿಗಳೂ ಇಸ್ರಾಯೇಲಿನ ಜನರೆಲ್ಲರೂ</verse>
				<verse number="11">ನಿಮ್ಮ ಮಕ್ಕಳೂ ಹೆಂಡತಿಯರೂ ನಿಮ್ಮ ಪಾಳೆಯದಲ್ಲಿರುವ ಪರದೇಶಿಯರೂ ನಿಮಗಾಗಿ ಕಟ್ಟಿಗೆ ಕಡಿಯುವವರೂ ನೀರು ಸೇದುವವರೂ ಸಹ</verse>
				<verse number="12">ನಿಮ್ಮ ದೇವರಾದ ಯೆಹೋವ ದೇವರು ಈ ಹೊತ್ತು ನಿಮ್ಮ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯನ್ನು ಸೇರುವುದಕ್ಕೆ ಅವರು ಆಣೆಯಿಟ್ಟು ಮುದ್ರಿಸಿದ್ದಾರೆ.</verse>
				<verse number="13">ಆ ಒಡಂಬಡಿಕೆ ಯಾವುದೆಂದರೆ, ದೇವರು ನಿಮಗೆ ಹೇಳಿದಂತೆಯೂ, ನಿಮ್ಮ ಪಿತೃಗಳಾದ ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಪ್ರಮಾಣ ಮಾಡಿದಂತೆಯೂ, ಈ ಹೊತ್ತು ನಿಮ್ಮನ್ನು ತಮ್ಮ ಜನರನ್ನಾಗಿ ಸ್ಥಾಪಿಸಿ, ನಿಮಗೆ ದೇವರಾಗಬೇಕೆಂಬುದೇ.</verse>
				<verse number="14">ಇದಲ್ಲದೆ ನಿಮ್ಮ ಸಂಗಡ ಮಾತ್ರ ಈ ಒಡಂಬಡಿಕೆಯನ್ನೂ, ಈ ಆಣೆಯನ್ನೂ ಮಾಡುವುದಲ್ಲದೆ</verse>
				<verse number="15">ಈ ಹೊತ್ತು ಇಲ್ಲಿ ನಮ್ಮೊಡನೆ ನಮ್ಮ ದೇವರಾದ ಯೆಹೋವ ದೇವರ ಮುಂದೆ ನಿಂತವರ ಸಂಗಡ, ಈ ಹೊತ್ತು ಇಲ್ಲಿ ನಮ್ಮೊಡನೆ ಇಲ್ಲದವರ ಸಂಗಡ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.</verse>
				<verse number="16">ಏಕೆಂದರೆ ನಾವು ಈಜಿಪ್ಟ್ ದೇಶದಲ್ಲಿ ಹೇಗೆ ವಾಸವಾಗಿದ್ದೆವೆಂದೂ, ನೀವು ದಾಟಿಬಂದ ಜನಾಂಗಗಳನ್ನು ನಾವು ಹೇಗೆ ದಾಟಿ ಬಂದೆವೆಂದೂ ನಿಮಗೆ ತಿಳಿದಿದೆ.</verse>
				<verse number="17">ಅವರ ಬಳಿಯಲ್ಲಿರುವ ಮರ, ಕಲ್ಲು, ಬೆಳ್ಳಿ, ಬಂಗಾರಗಳ ಅಸಹ್ಯವಾದ ಬೊಂಬೆಗಳನ್ನೂ ನೀವು ನೋಡಿದ್ದೀರಲ್ಲವೇ?</verse>
				<verse number="18">ಈ ಹೊತ್ತು ನಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು ಆ ಜನಾಂಗಗಳ ದೇವರುಗಳಿಗೆ ಸೇವೆ ಮಾಡುವುದಕ್ಕೆ ತಿರುಗಿಕೊಳ್ಳುವ ಹೃದಯವುಳ್ಳ ಪುರುಷನಾದರೂ ಸ್ತ್ರೀಯಾದರೂ ಕುಟುಂಬವಾದರೂ ಗೋತ್ರವಾದರೂ ಇರಬಾರದು. ಈ ಘೋರ ವಿಷವನ್ನೂ, ಬೆಳೆಸುವ ಬೇರೂ ನಿಮ್ಮಲ್ಲಿ ಇರಬಾರದು.</verse>
				<verse number="19">ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರೂ ತನ್ನೊಳಗೆ, “ನಾನು ಹಟ ಹಿಡಿದು, ಅವಿಧೇಯನಾದರೂ ನನಗೆ ಕ್ಷೇಮವೇ,” ಎಂದು ಹೇಳಿಕೊಂಡು ತನ್ನ ಹೃದಯದಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವವನು ಇರಬಾರದು. ಅಂಥವನು ನೀರಾವರಿ ನಾಡಿಗೂ ಒಣ ನಾಡಿಗೂ ನಾಶನವನ್ನು ತರುವನು.</verse>
				<verse number="20">ಅಂಥವನನ್ನು ಯೆಹೋವ ದೇವರು ಉಳಿಸುವುದಿಲ್ಲ, ಆಗಲೇ ಯೆಹೋವ ದೇವರ ಕೋಪವೂ, ರೋಷವೂ ಆ ಮನುಷ್ಯನನ್ನು ಸುಡುವುದು. ಈ ಗ್ರಂಥದಲ್ಲಿ ಬರೆದಿರುವ ಶಾಪವೆಲ್ಲಾ ಅವನ ಮೇಲೆ ಬರುವುದು. ಯೆಹೋವ ದೇವರು ಅವನ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವರು.</verse>
				<verse number="21">ಈ ನಿಯಮದ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ಎಲ್ಲಾ ಶಾಪಗಳ ಪ್ರಕಾರ ಯೆಹೋವ ದೇವರು ಅವನನ್ನು ಇಸ್ರಾಯೇಲಿನ ಎಲ್ಲಾ ಗೋತ್ರಗಳೊಳಗಿಂದ ಕೇಡಿಗೆ ಪ್ರತ್ಯೇಕಿಸುವರು.</verse>
				<verse number="22">ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ, ದೂರದೇಶದಿಂದ ಬರುವ ಅನ್ಯನೂ, ಆ ದೇಶದ ವಿಪತ್ತುಗಳನ್ನೂ, ಯೆಹೋವ ದೇವರು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡುವರು.</verse>
				<verse number="23">ಯೆಹೋವ ದೇವರು ತಮ್ಮ ದೈವಿಕ ಕೋಪದಲ್ಲಿ ಕೆಡವಿ ಹಾಕಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಂತೆ ಆ ದೇಶವೆಲ್ಲಾ ಗಂಧಕವೂ, ಉಪ್ಪೂ ಉರಿಯುತ್ತಾ, ವ್ಯವಸಾಯವಾದರೂ ಹುಲ್ಲಾದರೂ ಬೆಳೆಯದೆ ಇರುವುದು.</verse>
				<verse number="24">ಆಗ ಎಲ್ಲಾ ದೇಶದವರೂ, “ಯೆಹೋವ ದೇವರು ಈ ದೇಶಕ್ಕೆ ಏಕೆ ಹೀಗೆ ಮಾಡಿದ್ದಾರೆ? ಈ ದೊಡ್ಡ ಕೋಪಾಗ್ನಿಗೆ ಕಾರಣವೇನು?” ಎಂದು ಕೇಳುವರು.</verse>
				<verse number="25">ಆಗ ಜನರು, “ಇಸ್ರಾಯೇಲರು ತಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ತಮ್ಮ ಪಿತೃಗಳ ದೇವರಾದ ಯೆಹೋವ ದೇವರು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಉಲ್ಲಂಘಿಸಿದ್ದಾರೆ.</verse>
				<verse number="26">ಅವರು ತಮಗೆ ನೇಮಕವಾಗದಿದ್ದ ಹಾಗು ಗೊತ್ತಿಲ್ಲದಿದ್ದ ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದ್ದಾರೆ.</verse>
				<verse number="27">ಆದ್ದರಿಂದ ಯೆಹೋವ ದೇವರು ಇಸ್ರಾಯೇಲ್ ದೇಶದ ಮೇಲೆ ಕೋಪಗೊಂಡು ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿದ್ದಾರೆ.</verse>
				<verse number="28">ಯೆಹೋವ ದೇವರು ಅವರನ್ನು ತೀವ್ರಕೋಪದಲ್ಲಿಯೂ, ಮಹಾ ಆಸಕ್ತಿಯಲ್ಲಿಯೂ ದೇಶದಿಂದ ಕಿತ್ತುಹಾಕಿ, ಇಂದು ಇರುವ ಪ್ರಕಾರ ಅವರನ್ನು ಬೇರೆ ದೇಶಕ್ಕೆ ಕಳುಹಿಸಿದ್ದಾರೆ.”</verse>
				<verse number="29">ರಹಸ್ಯಗಳು ನಮ್ಮ ದೇವರಾದ ಯೆಹೋವ ದೇವರಿಗೆ ಸೇರಿದ್ದು, ಆದರೆ ಪ್ರಕಟವಾದ ಈ ನಿಯಮದ ಮಾತುಗಳನ್ನೆಲ್ಲಾ ನಾವು ಕೈಕೊಳ್ಳುವ ಹಾಗೆ ನಮಗೂ, ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.</verse>
			</chapter>
			<chapter number="30">
				<verse number="1">ನಾನು ನಿಮ್ಮ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ, ಶಾಪವೂ, ನಿಮಗೆ ಸಂಭವಿಸಿದಾಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಚದರಿಸಿರುವ ಎಲ್ಲಾ ಜನಾಂಗಗಳ ಮಧ್ಯದಲ್ಲಿಯೇ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು.</verse>
				<verse number="2">ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡು, ನೀವೂ, ನಿಮ್ಮ ಮಕ್ಕಳೂ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಮಾತುಗಳಿಗೆ, ನೀವು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ದೇವರಿಗೆ ವಿಧೇಯರಾಗಬೇಕು.</verse>
				<verse number="3">ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಸೆರೆಯಿಂದ ಬಿಡಿಸಿ, ನಿಮ್ಮ ಮೇಲೆ ಕನಿಕರಿಸಿ, ಅವರು ನಿಮ್ಮನ್ನು ಚದರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿಮ್ಮನ್ನು ಕೂಡಿಸುವರು.</verse>
				<verse number="4">ನಿಮ್ಮಲ್ಲಿ ಯಾರಾದರೂ ಭೂಮಿಯ ಕಟ್ಟಕಡೆಯವರೆಗೂ ಚದರಿ ಹೋಗಿದ್ದರೂ, ಅಲ್ಲಿಂದ ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ಸಹ ಕರೆದುತರುವರು.</verse>
				<verse number="5">ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಪಿತೃಗಳು ಸ್ವಾಧೀನ ಮಾಡಿಕೊಂಡ ದೇಶಕ್ಕೆ ನಿಮ್ಮನ್ನು ತರುವರು. ನೀವು ಅದನ್ನು ಸ್ವಾಧೀನಮಾಡಿಕೊಳ್ಳುವಿರಿ. ದೇವರು ನಿಮ್ಮ ಪಿತೃಗಳಿಗಿಂತಲೂ ನಿಮ್ಮನ್ನು ಸಮೃದ್ಧಿಗೊಳಿಸಿ ಹೆಚ್ಚಿಸುವರು.</verse>
				<verse number="6">ಆಗ ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಪ್ರೀತಿಸಿ, ನೀವು ಬದುಕಿ ಬಾಳುವಂತೆ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಹೃದಯವನ್ನೂ, ನಿಮ್ಮ ಸಂತತಿಯ ಹೃದಯವನ್ನೂ ಪರಿಚ್ಛೇದಿಸುವರು.</verse>
				<verse number="7">ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ಆ ಶಾಪಗಳನ್ನೆಲ್ಲಾ ನಿಮ್ಮ ಶತ್ರುಗಳ ಮೇಲೆಯೂ, ನಿಮ್ಮನ್ನು ಹಿಂಸಿಸಿದ ನಿಮ್ಮ ಹಗೆಯವರ ಮೇಲೆಯೂ ಬರಮಾಡುವರು.</verse>
				<verse number="8">ಆದರೆ ನೀವು ಪುನಃ ಯೆಹೋವ ದೇವರ ಮಾತನ್ನು ಕೇಳಿ, ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಅವರ ಎಲ್ಲಾ ಆಜ್ಞೆಗಳಂತೆ ನಡೆಯುವಿರಿ.</verse>
				<verse number="9">ಇದಲ್ಲದೆ ಯೆಹೋವ ದೇವರು ನಿಮ್ಮನ್ನು ನಿಮ್ಮ ಎಲ್ಲಾ ಕೈಕೆಲಸದಲ್ಲಿಯೂ, ನಿಮ್ಮ ಗರ್ಭದ ಫಲದಲ್ಲಿಯೂ, ನಿಮ್ಮ ಪಶುಗಳ ಫಲದಲ್ಲಿಯೂ, ನಿಮ್ಮ ಭೂಮಿಯ ಫಲದಲ್ಲಿಯೂ ಅತ್ಯಂತ ಅಭಿವೃದ್ಧಿಯನ್ನು ಮಾಡುವರು. ಯೆಹೋವ ದೇವರು ನಿಮ್ಮ ಪಿತೃಗಳಲ್ಲಿ ಸಂತೋಷಿಸಿದ ಹಾಗೆ ನಿಮ್ಮಲ್ಲಿಯೂ ಸಂತೋಷಿಸುವರು.</verse>
				<verse number="10">ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳಿ, ಈ ನಿಯಮದ ಗ್ರಂಥದಲ್ಲಿ ಬರೆದಿರುವ ಅವರ ಆಜ್ಞಾತೀರ್ಪುಗಳನ್ನು ಕಾಪಾಡಿ, ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಂಡರೆ, ನಿಮ್ಮಲ್ಲಿ ಸಂತೋಷಿಸುವರು.</verse>
				<verse number="11">ನಿಶ್ಚಯವಾಗಿ ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವ ಈ ಆಜ್ಞೆಯು ನಿಮಗೆ ಕಠಿಣವಾದದ್ದಲ್ಲ; ದೂರವಾದದ್ದೂ ಅಲ್ಲ.</verse>
				<verse number="12">“ನಾವು ಅದನ್ನು ಕೈಗೊಳ್ಳುವಂತೆ ನಮಗೋಸ್ಕರ ಯಾರು ಆಕಾಶಕ್ಕೆ ಏರಿಹೋಗಿ, ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವರು?” ಎಂದು ನೀವು ಕೇಳುವಂತೆ, ಆ ವಾಕ್ಯವು ಆಕಾಶದಲ್ಲಿ ಇರುವಂಥದ್ದೂ ಅಲ್ಲ.</verse>
				<verse number="13">“ನಾವು ಅದನ್ನು ಕೈಗೊಳ್ಳುವಂತೆ ನಮಗೋಸ್ಕರ ಯಾರು ಸಮುದ್ರವನ್ನು ದಾಟಿ, ನಮಗೆ ತೆಗೆದುಕೊಂಡು ಬಂದು ಅದನ್ನು ತಿಳಿಸುವರು?” ಎಂದು ನೀವು ಕೇಳುವಂತೆ, ಆ ವಾಕ್ಯವು ಸಮುದ್ರದ ಆಚೆಯಲ್ಲಿ ಇರುವಂಥದ್ದೂ ಅಲ್ಲ.</verse>
				<verse number="14">ಆ ವಾಕ್ಯವು ನಿಮಗೆ ಬಹಳ ಸಮೀಪವಾಗಿದೆ. ಅದನ್ನು ಕೈಗೊಳ್ಳುವ ಹಾಗೆ ವಾಕ್ಯವು ನಿಮ್ಮ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ.</verse>
				<verse number="15">ನೋಡಿರಿ, ನಾನು ಈ ಹೊತ್ತು ಜೀವ ಸಮೃದ್ಧಿಯನ್ನೂ, ಮರಣ ನಾಶನವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆ.</verse>
				<verse number="16">ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾರ್ಗಗಳಲ್ಲಿ ನಡೆದುಕೊಂಡು, ಅವರ ಆಜ್ಞಾತೀರ್ಪುಗಳನ್ನೂ, ಅನುಸರಿಸಬೇಕೆಂದು ಈ ಹೊತ್ತು ನಿಮಗೆ ಆಜ್ಞಾಪಿಸಿದ್ದೇನೆ. ಹಾಗೆ ಮಾಡಿದರೆ, ನೀವು ಬದುಕಿ ಹೆಚ್ಚುವಿರಿ. ನಿಮ್ಮ ದೇವರಾದ ಯೆಹೋವ ದೇವರು ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ನಿಮ್ಮನ್ನು ಆಶೀರ್ವದಿಸುವರು.</verse>
				<verse number="17">ಆದರೆ ನಿಮ್ಮ ಹೃದಯವು ತಿರುಗಿಬಿದ್ದು ನೀವು ಮಾತು ಕೇಳದೆ ಹೋದರೆ ಇಲ್ಲವೆ ಬೇರೆ ದೇವರುಗಳ ಕಡೆಗೆ ಸೆಳೆದವರಾಗಿ ಅಡ್ಡಬಿದ್ದು, ಅವುಗಳಿಗೆ ಸೇವೆ ಮಾಡಿದರೆ,</verse>
				<verse number="18">ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟಿ ಹೋಗುವ ದೇಶದಲ್ಲಿ ಬಹುಕಾಲ ಬಾಳದೆ, ನಾಶವಾಗಿಹೋಗುವಿರಿ ಎಂದು ಈ ಹೊತ್ತು ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.</verse>
				<verse number="19">ನಾನು ಜೀವ ಮರಣವನ್ನೂ, ಆಶೀರ್ವಾದ ಶಾಪವನ್ನೂ ನಿಮ್ಮ ಮುಂದೆ ಇಟ್ಟಿದ್ದೇನೆಂಬುದಕ್ಕೆ ಆಕಾಶವನ್ನೂ, ಭೂಮಿಯನ್ನೂ ಈ ಹೊತ್ತು ನಿಮ್ಮ ಮೇಲೆ ಸಾಕ್ಷಿಗಳಾಗಿ ಕರೆಯುತ್ತೇನೆ. ಆದುದರಿಂದ ನೀವೂ, ನಿಮ್ಮ ಸಂತತಿಯೂ, ಬದುಕಿ ಬಾಳುವಂತೆ ಜೀವವನ್ನೇ ಆಯ್ದುಕೊಳ್ಳಿರಿ.</verse>
				<verse number="20">ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾತನ್ನು ಕೇಳಿ, ಅವರನ್ನೇ ಹೊಂದಿಕೊಂಡಿರಿ. ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಲ್ಲಿ ನೀವು ಬಹುಕಾಲ ವಾಸಮಾಡುವಿರಿ.</verse>
			</chapter>
			<chapter number="31">
				<verse number="1">ಆಗ ಮೋಶೆ ಹೋಗಿ ಇಸ್ರಾಯೇಲರಿಗೆಲ್ಲಾ ಈ ಮಾತುಗಳನ್ನು ಹೇಳಿದನು:</verse>
				<verse number="2">“ನಾನು ಈ ಹೊತ್ತು ನೂರ ಇಪ್ಪತ್ತು ವರ್ಷದವನಾಗಿದ್ದೇನೆ. ಇನ್ನು ಮುಂದೆ ನಿಮ್ಮನ್ನು ಮುನ್ನಡೆಸಲು ನನಗೆ ಸಾಧ್ಯವಾಗುತ್ತಿಲ್ಲ. ಇದಲ್ಲದೆ ಯೆಹೋವ ದೇವರು ನನಗೆ, ‘ನೀನು ಈ ಯೊರ್ದನನ್ನು ದಾಟುವುದಿಲ್ಲ,’ ಎಂದು ಹೇಳಿದ್ದಾರೆ.</verse>
				<verse number="3">ನಿಮ್ಮ ದೇವರಾದ ಯೆಹೋವ ದೇವರು ತಾವೇ ನಿಮ್ಮ ಮುಂದೆ ಹೋಗುವರು. ಅವರು ಆ ಜನಾಂಗಗಳನ್ನು ನಿಮ್ಮ ಮುಂದೆ ಸೋಲಿಸುವರು. ನೀವು ಅವುಗಳನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಯೆಹೋವ ದೇವರು ಹೇಳಿದ ಪ್ರಕಾರ ಯೆಹೋಶುವನು ನಿಮ್ಮ ಮುಂದೆ ಹೋಗುವನು.</verse>
				<verse number="4">ಯೆಹೋವ ದೇವರು ಅಮೋರಿಯರ ಅರಸನಾದ ಸೀಹೋನನಿಗೂ, ಓಗನಿಗೂ, ಅವರ ದೇಶಕ್ಕೂ ಮಾಡಿದ ಪ್ರಕಾರ ಆ ಜನಾಂಗಗಳನ್ನು ದಂಡಿಸುವರು.</verse>
				<verse number="5">ಯೆಹೋವ ದೇವರು ಅವರನ್ನು ನಿಮಗೆ ಒಪ್ಪಿಸಿಕೊಡುವಾಗ, ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಅವರಿಗೆ ಮಾಡಬೇಕು.</verse>
				<verse number="6">ಶಕ್ತಿಶಾಲಿಗಳಾಗಿರಿ, ಧೈರ್ಯವಾಗಿರಿ, ಭಯಪಡಬೇಡಿರಿ, ಅವರಿಗೆ ಹೆದರಬೇಡಿರಿ. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ತಾವೇ ನಿಮ್ಮ ಮುಂದೆ ಹೋಗುತ್ತಾರೆ. ಅವರು ನಿಮ್ಮನ್ನು ಕೈಬಿಡುವುದಿಲ್ಲ, ತೊರೆಯುವುದೂ ಇಲ್ಲ.”</verse>
				<verse number="7">ಆಗ ಮೋಶೆಯು ಯೆಹೋಶುವನನ್ನು ಕರೆದು, ಸಮಸ್ತ ಇಸ್ರಾಯೇಲಿನ ಮುಂದೆ ಅವನಿಗೆ, “ಶಕ್ತಿಶಾಲಿಯಾಗಿರು, ಧೈರ್ಯವಾಗಿರು. ಏಕೆಂದರೆ ನೀನು ಈ ಜನರ ಸಂಗಡ ಹೋಗಿ ಯೆಹೋವ ದೇವರು ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ದೇಶದಲ್ಲಿ ಸೇರಿಸಬೇಕು. ನೀನು ಅವರಿಗೆ ಅದನ್ನು ಸೊತ್ತಾಗಿ ಹಂಚಿಕೊಡಬೇಕು.</verse>
				<verse number="8">ಯೆಹೋವ ದೇವರು ತಾವೇ ನಿನ್ನ ಮುಂದೆ ಹೋಗುತ್ತಾರೆ. ಅವರು ನಿನ್ನ ಸಂಗಡ ಇರುವರು, ಅವರು ನಿನ್ನನ್ನು ತೊರೆಯುವುದಿಲ್ಲ, ಮರೆತುಬಿಡುವುದಿಲ್ಲ. ನೀನು ಭಯಪಡಬೇಡ, ಅಂಜಿಕೊಳ್ಳಬೇಡ,” ಎಂದು ಹೇಳಿದನು.</verse>
				<verse number="9">ಇದಲ್ಲದೆ ಮೋಶೆಯು ಈ ನಿಯಮವನ್ನು ಬರೆದು, ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವಂಥ ಲೇವಿಯ ಪುತ್ರರಾದ ಯಾಜಕರಿಗೂ, ಇಸ್ರಾಯೇಲಿನ ಎಲ್ಲಾ ಹಿರಿಯರಿಗೂ ಒಪ್ಪಿಸಿದನು.</verse>
				<verse number="10">ಅನಂತರ ಮೋಶೆಯು ಅವರಿಗೆ, “ಪ್ರತಿ ಏಳು ವರ್ಷ ಕೊನೆಯಲ್ಲಿರುವ ಬಿಡುಗಡೆಯ ಪರಿಶುದ್ಧವಾದ ವರ್ಷದಲ್ಲಿ ಅಂದರೆ, ಗುಡಾರಗಳ ಹಬ್ಬದಲ್ಲಿ</verse>
				<verse number="11">ಇಸ್ರಾಯೇಲಿನವರೆಲ್ಲರು ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ, ಅವರು ಆಯ್ದುಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳುವುದಕ್ಕೆ ಬಂದಾಗ, ನೀವು ಈ ನಿಯಮವನ್ನು ಇಸ್ರಾಯೇಲಿನವರೆಲ್ಲರ ಮುಂದೆ ಜನರು ಕೇಳುವ ಹಾಗೆ ಓದಬೇಕು.</verse>
				<verse number="12">ಜನರನ್ನು ಅಂದರೆ, ಪುರುಷರನ್ನೂ ಸ್ತ್ರೀಯರನ್ನೂ ಮಕ್ಕಳನ್ನೂ ನಿಮ್ಮ ಊರುಗಳಲ್ಲಿರುವ ಪರದೇಶಿಯರನ್ನೂ ಕೂಡಿಸಬೇಕು. ಅವರು ಕೇಳಿ ಕಲಿತು, ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಈ ನಿಯಮದ ವಾಕ್ಯಗಳನ್ನೆಲ್ಲಾ ಕೈಗೊಂಡು ನಡೆಯುವ ಹಾಗೆ, ಅವರೆಲ್ಲರನ್ನು ಒಂದು ಕಡೆ ಕೂಡಿಸಬೇಕು.</verse>
				<verse number="13">ದೇವರ ಈ ನಿಯಮವನ್ನು ತಿಳಿಯದಿರುವ ಅವರ ಮಕ್ಕಳು ಸಹ ಕೇಳಿ, ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಬದುಕುವ ದಿವಸಗಳೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡುವುದಕ್ಕೆ ಕಲಿತುಕೊಳ್ಳಿರಿ, ಎಂದು ಅವರಿಗೆ ಆಜ್ಞಾಪಿಸಿ ಹೇಳಬೇಕು,” ಎಂದನು.</verse>
				<verse number="14">ಇದಲ್ಲದೆ ಯೆಹೋವ ದೇವರು ಮೋಶೆಗೆ, “ಇಗೋ, ನೀನು ಸಾಯುವ ದಿನಗಳು ಸಮೀಪವಾದವು. ಯೆಹೋಶುವನನ್ನು ಕರೆದು ನೀವು ದೇವದರ್ಶನ ಗುಡಾರದಲ್ಲಿ ನಿಂತುಕೊಳ್ಳಿರಿ. ಆಗ ಅವನಿಗೆ ಅಧಿಕಾರ ಕೊಡುವೆನು,” ಎಂದರು. ಆ ಪ್ರಕಾರವೆ ಮೋಶೆಯೂ, ಯೆಹೋಶುವನೂ ಹೋಗಿ ದೇವದರ್ಶನ ಗುಡಾರದಲ್ಲಿ ನಿಂತುಕೊಂಡರು.</verse>
				<verse number="15">ಆಗ ಯೆಹೋವ ದೇವರು ಗುಡಾರದೊಳಗೆ ಮೇಘ ಸ್ತಂಭದಲ್ಲಿ ಕಾಣಿಸಿಕೊಂಡರು. ಆ ಮೇಘಸ್ತಂಭವು ಗುಡಾರದ ಬಾಗಿಲಿನ ಮೇಲೆ ನಿಂತಿತು.</verse>
				<verse number="16">ಆಗ ಯೆಹೋವ ದೇವರು ಮೋಶೆಗೆ, “ನೀನು ಮೃತನಾಗಿ, ನಿನ್ನ ಪಿತೃಗಳ ಸಂಗಡ ಸೇರುವಿ. ಈ ಜನರು ದೇವದ್ರೋಹಿಗಳಾಗಿ, ಅವರು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಪೂಜೆ ಮಾಡಿ, ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿದ ಒಡಂಬಡಿಕೆಯನ್ನು ಮೀರುವರು.</verse>
				<verse number="17">ಆ ದಿವಸದಲ್ಲಿ ನಾನು ಅವರ ಮೇಲೆ ಕೋಪಗೊಂಡು ಅವರನ್ನು ಬಿಟ್ಟುಬಿಟ್ಟು, ನನ್ನ ಮುಖವನ್ನು ಅವರಿಗೆ ಮರೆಮಾಡುವೆನು. ವಿರೋಧಿಗಳು ಅವರನ್ನು ನುಂಗಿಬಿಡುವರು. ಬಹಳ ಕೇಡುಗಳೂ, ಇಕ್ಕಟ್ಟುಗಳೂ ಅವರಿಗೆ ಸಂಭವಿಸುವುದು. ಆ ದಿವಸದಲ್ಲಿ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ನಮಗೆ ಕೇಡುಗಳು,’ ಎಂದು ಹೇಳುವರು.</verse>
				<verse number="18">ಅವರು ಮಾಡಿದ ಎಲ್ಲಾ ದುಷ್ಕೃತ್ಯದ ನಿಮಿತ್ತವೂ, ಅನ್ಯದೇವರುಗಳ ಕಡೆಗೆ ತಿರುಗಿದ್ದರಿಂದಲೂ ನಾನು ಆ ದಿವಸದಲ್ಲಿ ನನ್ನ ಮುಖವನ್ನು ಖಂಡಿತ ಮರೆಮಾಡುವೆನು.</verse>
				<verse number="19">“ಹೀಗಿರುವುದರಿಂದ ಈಗ ಈ ಹಾಡನ್ನು ಬರೆದುಕೊಳ್ಳಿರಿ. ಇಸ್ರಾಯೇಲರಲ್ಲಿ ಈ ಹಾಡು ನನಗೆ ಸಾಕ್ಷಿಯಾಗಿರುವ ಹಾಗೆ ಅದನ್ನು ಅವರಿಗೆ ಬಾಯಿಪಾಠ ಮಾಡಿಸು.</verse>
				<verse number="20">ನಾನು ಅವರ ಪಿತೃಗಳಿಗೆ ಪ್ರಮಾಣ ಮಾಡಿದಂಥ, ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ, ಅವರು ತಿಂದು ತೃಪ್ತರಾಗಿ ಕೊಬ್ಬಿದವರಾದಾಗ, ಅವರು ಅನ್ಯದೇವರುಗಳ ಕಡೆಗೆ ತಿರುಗಿಕೊಂಡು, ಅವುಗಳನ್ನು ಪೂಜಿಸಿ, ನನಗೆ ಕೋಪವನ್ನೆಬ್ಬಿಸಿ, ನನ್ನ ಒಡಂಬಡಿಕೆಯನ್ನು ಮೀರುವರು.</verse>
				<verse number="21">ಬಹಳ ಕೇಡುಗಳೂ ವಿಪತ್ತುಗಳೂ ಅವರಿಗೆ ಸಂಭವಿಸುವಾಗ, ಈ ಹಾಡು ಅವರಿಗೆ ವಿರೋಧ ಸಾಕ್ಷಿಯಾಗಿ ಉತ್ತರಕೊಡುವುದು. ಏಕೆಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತು ಹೋಗುವುದಿಲ್ಲ. ನಾನು ಪ್ರಮಾಣ ಮಾಡಿದ ದೇಶದಲ್ಲಿ ಅವರನ್ನು ತರುವುದಕ್ಕಿಂತ ಮುಂಚೆ ಅವರು ಈ ಹೊತ್ತು ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು.”</verse>
				<verse number="22">ಆದ್ದರಿಂದ ಮೋಶೆ ಅದೇ ದಿವಸದಲ್ಲಿ ಈ ಹಾಡನ್ನು ಬರೆದು ಇಸ್ರಾಯೇಲರಿಗೆ ಕಲಿಸಿದನು.</verse>
				<verse number="23">ಅವನು ನೂನನ ಮಗನಾದ ಯೆಹೋಶುವನಿಗೆ ಆಜ್ಞಾಪಿಸಿ, “ಶೂರನಾಗಿರು, ಧೈರ್ಯವಾಗಿರು, ಏಕೆಂದರೆ ನೀನು ಇಸ್ರಾಯೇಲರನ್ನು ನಾನು ಅವರಿಗೆ ಪ್ರಮಾಣ ಮಾಡಿದ ದೇಶಕ್ಕೆ ತರುವೆ, ನಾನು ನಿನ್ನ ಸಂಗಡ ಇರುವೆನು,” ಎಂದು ಹೇಳಿದನು.</verse>
				<verse number="24">ಇದಲ್ಲದೆ ಮೋಶೆ ಈ ನಿಯಮದ ವಾಕ್ಯಗಳನ್ನು ಗ್ರಂಥದಲ್ಲಿ ಬರೆದು ತೀರಿಸಿದಾಗ,</verse>
				<verse number="25">ಮೋಶೆ ಯೆಹೋವ ದೇವರು ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಿಗೆ,</verse>
				<verse number="26">“ದೇವರ ನಿಯಮದ ಈ ಗ್ರಂಥವನ್ನು ತೆಗೆದುಕೊಂಡು ನಿಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿ ಇಡಿರಿ. ಅದು ನಿಮಗೆ ವಿರೋಧವಾದ ಸಾಕ್ಷಿಯಾಗಿ ಅಲ್ಲಿ ಇರಲಿ.</verse>
				<verse number="27">ಏಕೆಂದರೆ ನಿಮ್ಮ ದ್ರೋಹವನ್ನೂ, ನಿಮ್ಮ ಹಟಮಾರಿತನವನ್ನೂ ನಾನು ಬಲ್ಲೆನು. ಈ ಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರುವಾಗಲೇ ಯೆಹೋವ ದೇವರಿಗೆ ದ್ರೋಹ ಮಾಡಿದವರಾದಿರಿ. ನಾನು ಸತ್ತಮೇಲೆ ಇನ್ನೇನಾಗುವುದು?</verse>
				<verse number="28">ನಿಮ್ಮ ಗೋತ್ರಗಳ ಎಲ್ಲಾ ಹಿರಿಯರನ್ನೂ, ನಿಮ್ಮ ಅಧಿಕಾರಿಗಳನ್ನೂ ನನ್ನ ಬಳಿಗೆ ಸೇರಿಸಿರಿ. ಆಗ ಈ ಮಾತುಗಳನ್ನು ಅವರು ಕೇಳುವ ಹಾಗೆ ಆಕಾಶವನ್ನೂ, ಭೂಮಿಯನ್ನೂ ಸಾಕ್ಷಿಗೆ ಕರೆಯುವೆನು.</verse>
				<verse number="29">ಏಕೆಂದರೆ ನಾನು ಸತ್ತಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವೇ ಕೆಡಿಸಿಕೊಂಡು, ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು. ನೀವು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ನಿಮ್ಮ ಕ್ರಿಯೆಗಳಿಂದ ಅವರಿಗೆ ಕೋಪವನ್ನೆಬ್ಬಿಸುವದರಿಂದ ನಿಮಗೆ ಕೇಡು ಸಂಭವಿಸುವುದು,” ಎಂದು ಹೇಳಿದನು.</verse>
				<verse number="30">ಆಗ ಮೋಶೆ ಇಸ್ರಾಯೇಲ್ ಸಮೂಹಕ್ಕೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಪ್ರಾರಂಭದಿಂದ ಕೊನೆಯವರೆಗೆ ಹೇಳಿದನು.</verse>
			</chapter>
			<chapter number="32">
				<verse number="1">ಆಕಾಶವೇ, ಕಿವಿಗೊಡು. ನಾನು ಮಾತನಾಡುತ್ತೇನೆ. ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು.</verse>
				<verse number="2">ನನ್ನ ಬೋಧನೆ ಮಳೆಯಂತೆ ಸುರಿಯುವುದು. ನನ್ನ ಮಾತು ಮಂಜಿನಂತೆಯೂ, ಹುಲ್ಲಿನ ಮೇಲೆ ಬೀಳುವ ವೃಷ್ಟಿಗಳ ಹಾಗೆಯೂ ಬೀಳುವುದು.</verse>
				<verse number="3">ಏಕೆಂದರೆ ಯೆಹೋವ ದೇವರ ಹೆಸರನ್ನು ನಾನು ಸಾರುತ್ತೇನೆ. ನಮ್ಮ ದೇವರಿಗೆ ಮಹತ್ವವನ್ನು ಕೊಡಿರಿ.</verse>
				<verse number="4">ದೇವರು ಸಂರಕ್ಷಿಸುವ ಬಂಡೆ. ದೇವರ ಕಾರ್ಯವು ಸಂಪೂರ್ಣವಾದದ್ದು. ಅವರ ಮಾರ್ಗಗಳೆಲ್ಲಾ ನ್ಯಾಯವಾಗಿವೆ. ಅವರು ಯಾವ ತಪ್ಪನ್ನೂ ಮಾಡದ ನಂಬಿಗಸ್ತ ದೇವರು, ನೀತಿವಂತರೂ ಯಥಾರ್ಥರೂ ಆದ ದೇವರು.</verse>
				<verse number="5">ಇಸ್ರಾಯೇಲರು ತಮ್ಮನ್ನು ಕೆಡಿಸಿಕೊಂಡರು. ದೇವರ ಮಕ್ಕಳಿಗೆ ತಕ್ಕಂತೆ ನಡೆಯದವರು. ಅವರು ಮೂರ್ಖರಾದ ವಕ್ರ ಸಂತತಿ.</verse>
				<verse number="6">ಯೆಹೋವ ದೇವರಿಗೆ ಪ್ರತಿಯಾಗಿ ಹೀಗೆ ವರ್ತಿಸುವುದು ಸರಿಯೋ? ಜ್ಞಾನವಿಲ್ಲದ ಬುದ್ಧಿಹೀನ ಜನರೇ, ದೇವರು ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೋ? ನಿಮ್ಮನ್ನು ಸೃಷ್ಟಿಸಿ ಸ್ಥಿರಪಡಿಸಿದ್ದು ದೇವರಲ್ಲವೋ?</verse>
				<verse number="7">ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳಿರಿ. ತಲತಲಾಂತರಗಳ ವರುಷಗಳನ್ನು ಗ್ರಹಿಸಿಕೊಳ್ಳಿರಿ. ನಿಮ್ಮ ತಂದೆಯನ್ನು ಕೇಳಿದರೆ, ಅವರು ನಿಮಗೆ ತಿಳಿಸುವರು. ನಿಮ್ಮ ಹಿರಿಯರನ್ನು ಕೇಳಿದರೆ, ಅವರು ನಿಮಗೆ ಹೇಳುವರು.</verse>
				<verse number="8">ಮಹೋನ್ನತ ದೇವರು ಜನಾಂಗಗಳಿಗೆ ಸ್ಥಳವನ್ನು ಕೊಡುವಾಗಲೂ, ಅವರು ಮಾನವರನ್ನು ವಿಂಗಡಿಸುವಾಗಲೂ, ಇಸ್ರಾಯೇಲರ ಲೆಕ್ಕದ ಪ್ರಕಾರ ಜನರ ಮೇರೆಗಳನ್ನು ಗುರುತಿಸಿಕೊಂಡರು.</verse>
				<verse number="9">ಏಕೆಂದರೆ ಯೆಹೋವ ದೇವರ ಪಾಲು ಅವರ ಜನರೇ ಆಗಿರುತ್ತಾರೆ. ಯಾಕೋಬ್ಯರೇ ದೇವರ ಸೊತ್ತಿನ ಪಾಲು.</verse>
				<verse number="10">ದೇವರು ಬರಿದಾದ ಮರುಭೂಮಿಯಲ್ಲಿ ಇಸ್ರಾಯೇಲರನ್ನು ಕಂಡು ನಡೆಸಿದರು. ದೇವರು ಇಸ್ರಾಯೇಲರನ್ನು ರಕ್ಷಿಸಿ, ಉಪದೇಶಿಸಿ, ತಮ್ಮ ಕಣ್ಣುಗುಡ್ಡೆಯಂತೆ ಕಾಪಾಡಿದರು.</verse>
				<verse number="11">ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ, ಅವುಗಳ ಮೇಲೆ ರೆಕ್ಕೆಯನ್ನಾಡಿಸಿ, ತನ್ನ ರೆಕ್ಕೆಗಳನ್ನು ಚಾಚಿ, ಅವುಗಳನ್ನು ತೆಗೆದುಕೊಂಡು ರೆಕ್ಕೆಯ ಮೇಲೆ ಎತ್ತಿಕೊಳ್ಳುವಂತೆ,</verse>
				<verse number="12">ಯೆಹೋವ ದೇವರು ಮಾತ್ರವೇ ಇಸ್ರಾಯೇಲರನ್ನು ನಡೆಸಿಕೊಂಡು ಬಂದರು. ಅನ್ಯದೇವರು ಯಾರೂ ಇಸ್ರಾಯೇಲರ ಸಂಗಡ ಇರಲಿಲ್ಲ.</verse>
				<verse number="13">ದೇವರು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ, ಅವರಿಗೆ ವ್ಯವಸಾಯ ವೃದ್ಧಿಯನ್ನುಂಟುಮಾಡಿ, ಬಂಡೆಯಿಂದ ಜೇನೂ, ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದರು.</verse>
				<verse number="14">ಹಸುಗಳ ಕೆನೆಯನ್ನೂ, ಕುರಿಗಳ ಹಾಲನ್ನೂ, ಕುರಿಮರಿಗಳ ಕೊಬ್ಬಿನ ಸಂಗಡ ಬಾಷಾನಿನ ಟಗರುಗಳನ್ನೂ ಹೋತಗಳನ್ನೂ ಉತ್ತಮವಾದ ಗೋಧಿಯನ್ನು ಕೊಟ್ಟರು. ನೀನು ರಕ್ತಗೆಂಪಾದ ದ್ರಾಕ್ಷಾರಸವನ್ನು ಕುಡಿದೆ.</verse>
				<verse number="15">ಯೆಶುರೂನು ಎಂಬ ಇಸ್ರಾಯೇಲರು ಕೊಬ್ಬಿ ಹೋದರು. ಅವರು ಹೊಟ್ಟೆ ತುಂಬ ಚೆನ್ನಾಗಿ ತಿಂದು ದಪ್ಪವಾದರು. ಅವರು ತಮ್ಮನ್ನು ಸೃಷ್ಟಿಮಾಡಿದ ದೇವರನ್ನು ಬಿಟ್ಟು, ತಮ್ಮ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದರು.</verse>
				<verse number="16">ಅನ್ಯದೇವತೆಗಳಿಂದ ದೇವರಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ದೇವರಿಗೆ ಕೋಪವನ್ನು ಎಬ್ಬಿಸಿದರು.</verse>
				<verse number="17">ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಮುಂಚಿತವಾಗಿ ಅರಿಯದ ದೇವರುಗಳಿಗೆ, ಸಮೀಪದಲ್ಲಿ ಹೊಸದಾಗಿ ತೋರಿ ಬಂದ ದೇವರುಗಳಿಗೆ, ಅಂದರೆ, ಅವರ ಪಿತೃಗಳು ಭಜಿಸದವುಗಳಿಗೆ ಬಲಿ ಅರ್ಪಿಸಿದರು.</verse>
				<verse number="18">ನಿಮ್ಮನ್ನು ಹುಟ್ಟಿಸಿದ ರಕ್ಷಣಾಬಂಡೆಯನ್ನು ನೆನಸದೆ, ನಿಮ್ಮನ್ನು ರೂಪಿಸಿದ ದೇವರನ್ನು ಮರೆತುಬಿಟ್ಟಿರಿ.</verse>
				<verse number="19">ಯೆಹೋವ ದೇವರು ಅದನ್ನು ನೋಡಿ ಬೇಸರದಿಂದ ತಮ್ಮ ಪುತ್ರಪುತ್ರಿಯರನ್ನು ದಂಡಿಸಿದರು.</verse>
				<verse number="20">ದೇವರು, “ನನ್ನ ಮುಖವನ್ನು ಅವರಿಗೆ ಮರೆಮಾಡುವೆನು, ಅವರ ಅಂತ್ಯವು ಏನೆಂದು ನೋಡುವೆನು. ಅವರು ಮೂರ್ಖ ಸಂತತಿಯೇ. ನಂಬಿಕೆಯಿಲ್ಲದ ಮಕ್ಕಳೇ.</verse>
				<verse number="21">ದೇವರಲ್ಲದವುಗಳಿಂದ ಅವರು ನನಗೆ ರೋಷ ಹುಟ್ಟಿಸಿದರು. ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪವನ್ನು ಎಬ್ಬಿಸಿದರು. ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.</verse>
				<verse number="22">ಏಕೆಂದರೆ ನನ್ನ ರೋಷ ಬೆಂಕಿಯಂತಿದೆ, ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ, ಅದರ ಫಲವನ್ನೂ ತಿಂದು ಬಿಟ್ಟು, ಬೆಟ್ಟಗಳ ಅಸ್ತಿವಾರವನ್ನು ದಹಿಸುವುದು.</verse>
				<verse number="23">“ನಾನು ಕೇಡುಗಳನ್ನು ಅವರ ಮೇಲೆ ಕೂಡಿಸಿಡುವೆನು. ನನ್ನ ಬಾಣಗಳನ್ನು ಅವರ ಮೇಲೆ ಎಸೆದು ತೀರಿಸುವೆನು.</verse>
				<verse number="24">ಅವರು ಹಸಿವೆಯಿಂದ ಬಳಲಿ ಹೋಗುವರು, ಜ್ವಾಲೆಯಿಂದಲೂ ಕಠಿಣ ವ್ಯಾಧಿಯಿಂದಲೂ ಬೀಳುವರು. ಕಾಡುಮೃಗಗಳನ್ನೂ ಧೂಳಿನಲ್ಲಿರುವ ವಿಷಸರ್ಪಗಳನ್ನೂ ಅವರಿಗೆ ವಿರೋಧವಾಗಿ ಕಳುಹಿಸುವೆನು.</verse>
				<verse number="25">ಮನೆಯ ಹೊರಗೆ ಖಡ್ಗವೂ ಒಳಗೆ ಭಯವೂ ಇವರಲ್ಲಿರುವುವು. ಪ್ರಾಯಸ್ಥರೂ ಕನ್ನಿಕೆಯರೂ ನರೆಕೂದಲಿನವರೂ ಹಾಲು ಕುಡಿಯುವ ಕೂಸುಗಳೂ ಖಡ್ಗಗಳಿಗೆ ಸಂಹಾರವಾಗುವರು.</verse>
				<verse number="26">ನಾನು ಅವರನ್ನು ಚದರಿಸಿಬಿಡುವೆನು. ಅವರ ನೆನಪೇ ಮನುಷ್ಯರಲ್ಲಿ ಇರದ ಹಾಗೆ ಮಾಡುತ್ತಿದ್ದೆನು.</verse>
				<verse number="27">ಆದರೆ ಅವರ ವಿರೋಧಿಗಳು ತಪ್ಪಾದ ಭಾವನೆ ಮಾಡಿಕೊಂಡು, ‘ಯೆಹೋವ ದೇವರು ಇವುಗಳನ್ನೆಲ್ಲಾ ಮಾಡಲಿಲ್ಲ, ನಾವೇ ನಮ್ಮ ಕೈಯಿಂದ ಜಯಿಸಿದೆವೆಂದುಕೊಳ್ಳುವರು,’ ಆದ್ದರಿಂದ ನಾನು ಹಿಂತಗೆದುಕೊಂಡೆನು.”</verse>
				<verse number="28">ಏಕೆಂದರೆ ಇಸ್ರಾಯೇಲರು ಆಲೋಚನೆ ಇಲ್ಲದ ಜನಾಂಗವೇ. ಅವರಲ್ಲಿ ವಿವೇಕವಿಲ್ಲ.</verse>
				<verse number="29">ಅವರಿಗೆ ಜ್ಞಾನವಿದ್ದಿದ್ದರೆ ಈ ವಿಷಯಗಳನ್ನೆಲ್ಲಾ ಗ್ರಹಿಸುತ್ತಿದ್ದರು, ತಮ್ಮ ಕಡೆಕಾಲದಲ್ಲಿ ದುರವಸ್ಥೆ ಪ್ರಾಪ್ತವಾಗುವದೆಂದು ತಿಳಿದುಕೊಳ್ಳುತ್ತಿದ್ದರು.</verse>
				<verse number="30">ಇಸ್ರಾಯೇಲ್ ರಕ್ಷಣಾಬಂಡೆ ಅವರನ್ನು ಮಾರಿ, ಯೆಹೋವ ದೇವರು ಅವರನ್ನು ಕೈಬಿಟ್ಟ ಹೊರತು, ಒಬ್ಬನು ಹೇಗೆ ಸಾವಿರ ಮಂದಿಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?</verse>
				<verse number="31">ಏಕೆಂದರೆ ನಮ್ಮ ರಕ್ಷಣಾಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.</verse>
				<verse number="32">ಏಕೆಂದರೆ ಸೊದೋಮಿನ ದ್ರಾಕ್ಷಿಗಿಡದಿಂದಲೂ, ಗೊಮೋರದ ತೋಟದೊಳಗಿಂದಲೂ ಅವರ ದ್ರಾಕ್ಷಿಗಿಡ ಉಂಟಾಯಿತು. ಅವರ ಹಣ್ಣುಗಳು, ವಿಷದ ಹಣ್ಣುಗಳು, ಆ ಹಣ್ಣುಗಳ ಗೊಂಚಲು ಕಹಿಯಾಗಿವೆ.</verse>
				<verse number="33">ಅವರ ದ್ರಾಕ್ಷಾರಸವು ಸರ್ಪಗಳ ವಿಷವೂ, ಹಾವುಗಳ ಕ್ರೂರ ವಿಷವೂ ಆಗಿದೆ.</verse>
				<verse number="34">“ನಾನು ಇದನ್ನು ನನ್ನ ಉಗ್ರಾಣಗಳಲ್ಲಿ ಸಂಗ್ರಹಿಸಿದ್ದಲ್ಲವೋ? ಇದನ್ನು ನಾನು ಮುದ್ರಿಸಿದ್ದಲ್ಲವೋ?</verse>
				<verse number="35">ಮುಯ್ಯಿಗೆ ಮುಯ್ಯಿ ತೀರಿಸುವುದೂ, ಪ್ರತಿಫಲ ಕೊಡುವುದೂ ನನ್ನದೇ. ತಕ್ಕ ಕಾಲದಲ್ಲಿ ಅವರ ಕಾಲು ಜಾರುವುದು. ಅವರ ವಿನಾಶದ ದಿವಸ ಸಮೀಪವಾಗಿದೆ. ಅವರಿಗೆ ಸಿದ್ಧವಾದ ದುರ್ಗತಿಯ ಕಾಲ ಬೇಗ ಬರುತ್ತವೆ.”</verse>
				<verse number="36">ಏಕೆಂದರೆ ಯೆಹೋವ ದೇವರು ತಮ್ಮ ಜನರಿಗೆ ನ್ಯಾಯತೀರಿಸುವರು. ದೇವರು ತಮ್ಮ ಸೇವಕರ ಬಲ ಹೋಯಿತೆಂದೂ, ಗುಲಾಮರಾಗಲಿ, ಸ್ವತಂತ್ರರಾಗಲಿ ಉಳಿಯಲಿಲ್ಲವೆಂದೂ ನೋಡಿದಾಗ, ತಮ್ಮ ಸೇವಕರಿಗೋಸ್ಕರ ಕರುಣಿಸುವರು.</verse>
				<verse number="37">ಆಗ ಯೆಹೋವ ದೇವರು ಹೀಗನ್ನುವರು: “ಅವರ ದೇವರುಗಳು ಎಲ್ಲಿ? ಅವರು ನಂಬಿಕೊಂಡಂಥ,</verse>
				<verse number="38">ಅವರ ಬಲಿಗಳ ಕೊಬ್ಬನ್ನು ತಿಂದಂಥ, ಅವರ ಪಾನದ ಅರ್ಪಣೆಗಳ ದ್ರಾಕ್ಷಾರಸ ಕುಡಿದಂಥ ದೇವರುಗಳು ಎಲ್ಲಿ? ಈಗ ಆ ದೇವರುಗಳು ಎದ್ದು ನಿಮಗೆ ಸಹಾಯ ಮಾಡಲಿ, ನಿಮಗೋಸ್ಕರ ಕಾವಲಾಗಲಿ.</verse>
				<verse number="39">“ನಾನು ಇರುವಾತನೇ ಆಗಿದ್ದೇನೆ! ನನ್ನ ಹಾಗೆ ಬೇರೆ ದೇವರು ಇಲ್ಲವೆಂದು ಈಗ ನೋಡಿರಿ. ನಾನೇ ಸಾಯಿಸುತ್ತೇನೆ, ಬದುಕಿಸುತ್ತೇನೆ, ಗಾಯಮಾಡುತ್ತೇನೆ, ನಾನೇ ಗುಣಪಡಿಸುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.</verse>
				<verse number="40">ಆಕಾಶದ ಕಡೆ ನನ್ನ ಕೈಯೆತ್ತಿ, ನಾನು ನಿತ್ಯವಾಗಿ ಬದುಕುವಾತನು ಎಂದು ಹೇಳುತ್ತೇನೆ.</verse>
				<verse number="41">ನಾನು ಮಿಂಚುವ ಖಡ್ಗವನ್ನು ಹದಮಾಡಿ, ನನ್ನ ಕೈ ನ್ಯಾಯವನ್ನು ಹಿಡಿದುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ನನ್ನನ್ನು ದ್ವೇಷಿಸುವವರಿಗೆ ಮುಯ್ಯಿತೀರಿಸುವೆನು.</verse>
				<verse number="42">ಸತ್ತವರ ಮತ್ತು ಸೆರೆಯಾದವರ ರಕ್ತದಿಂದಲೂ, ಶತ್ರುವಿಗೆ ಮಾಡಿದ ಪ್ರತೀಕಾರದಿಂದಲೂ ನನ್ನ ಬಾಣಗಳು ಅಮಲೇರುವುದು. ನನ್ನ ಖಡ್ಗವು ಮಾಂಸವನ್ನು ಭಕ್ಷಿಸುವುದು. ಹೀಗೆ ಶತ್ರುಗಳ ನಾಯಕರ ತಲೆ ಬೀಳುವುದು.”</verse>
				<verse number="43">ಎಲ್ಲಾ ಜನಾಂಗಗಳೇ, ದೇವಜನರ ಸಂಗಡ ಹರ್ಷಿಸಿರಿ. ಏಕೆಂದರೆ ದೇವರು ತಮ್ಮ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುವರು. ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ದೇಶಕ್ಕೋಸ್ಕರವೂ, ತಮ್ಮ ಜನರಿಗೋಸ್ಕರವೂ ದೋಷಪರಿಹಾರ ಮಾಡುವರು.</verse>
				<verse number="44">ಆಗ ಮೋಶೆಯು ನೂನನ ಮಗನಾದ ಹೋಶೇಯನ ಸಂಗಡ ಬಂದು, ಈ ಹಾಡಿನ ಮಾತುಗಳನ್ನೆಲ್ಲಾ ಜನರು ಕೇಳುವ ಹಾಗೆ ಹೇಳಿದನು.</verse>
				<verse number="45">ಮೋಶೆಯು ಈ ಮಾತುಗಳನ್ನೆಲ್ಲಾ ಸಮಸ್ತ ಇಸ್ರಾಯೇಲಿಗೆ ಹೇಳಿ ತೀರಿಸಿದ ತರುವಾಯ ಅವನು ಅವರಿಗೆ,</verse>
				<verse number="46">“ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ಮನಸ್ಸಿನಲ್ಲಿಟ್ಟುಕೊಳ್ಳಿರಿ. ಈ ನಿಯಮದ ಮಾತುಗಳನ್ನು ಅನುಸರಿಸಬೇಕೆಂದು ನೀವು ನಿಮ್ಮ ಮಕ್ಕಳಿಗೆ ಆಜ್ಞಾಪಿಸಿರಿ.</verse>
				<verse number="47">ಏಕೆಂದರೆ ಇದು ನಿಮಗೆ ಕೇವಲ ವ್ಯರ್ಥವಾದದ್ದಲ್ಲ. ಇದು ನಿಮಗೆ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ,” ಎಂದು ಹೇಳಿದನು.</verse>
				<verse number="48">ಆ ದಿವಸವೇ ಯೆಹೋವ ದೇವರು ಮೋಶೆಗೆ,</verse>
				<verse number="49">“ನೀನು ಈ ಅಬಾರೀಮ್ ಬೆಟ್ಟದ ಮೇಲೆ ಅಂದರೆ, ಮೋವಾಬ್ ದೇಶದಲ್ಲಿ ಯೆರಿಕೋವಿಗೆ ಎದುರಾಗಿ ಇರುವ ನೆಬೋ ಪರ್ವತದ ಮೇಲೆ ಏರಿ ಹೋಗು. ನಾನು ಇಸ್ರಾಯೇಲರಿಗೆ ಸೊತ್ತಾಗಿ ಕೊಡುವ ಕಾನಾನ್ ದೇಶವನ್ನು ನೋಡು.</verse>
				<verse number="50">ನಿನ್ನ ಸಹೋದರನಾದ ಆರೋನನು ಹೋರ್ ಬೆಟ್ಟದಲ್ಲಿ ಸತ್ತು, ತನ್ನ ಜನರ ಬಳಿಗೆ ಸೇರಿದ ಹಾಗೆ, ನೀನು ಏರಿಹೋಗುವ ಬೆಟ್ಟದಲ್ಲಿ ಸತ್ತು, ನಿನ್ನ ಜನರ ಬಳಿಗೆ ಸೇರಬೇಕು.</verse>
				<verse number="51">ನೀವಿಬ್ಬರೂ ಚಿನ್ ಮರುಭೂಮಿಯಲ್ಲಿ ಕಾದೇಶಿನ ಮೆರೀಬಾದ ನೀರಿನ ಬಳಿಯಲ್ಲಿ ನನ್ನನ್ನು ಇಸ್ರಾಯೇಲರ ಮುಂದೆ ನಂಬದೆ, ನನ್ನ ಪವಿತ್ರತೆಯನ್ನು ಇಸ್ರಾಯೇಲರ ನಡುವೆ ಕಾಪಾಡದೆ ನಂಬದೆ ಹೋದಿರಿ.</verse>
				<verse number="52">ಆದುದರಿಂದ, ನೀನು ಆ ದೇಶವನ್ನು ದೂರದಿಂದ ನೋಡುವೆ, ಆದರೆ ನಾನು ಇಸ್ರಾಯೇಲರಿಗೆ ಕೊಡುವ ದೇಶದಲ್ಲಿ ನೀನು ಪ್ರವೇಶಿಸುವುದಿಲ್ಲ,” ಎಂದು ಹೇಳಿದರು.</verse>
			</chapter>
			<chapter number="33">
				<verse number="1">ದೇವರ ಮನುಷ್ಯನಾದ ಮೋಶೆಯು ಮರಣ ಹೊಂದುವದಕ್ಕಿಂತ ಮುಂಚೆ ಇಸ್ರಾಯೇಲರಿಗೆ ಕೊಟ್ಟ ಆಶೀರ್ವಾದ:</verse>
				<verse number="2">“ಯೆಹೋವ ದೇವರು ಸೀನಾಯಿ ಬೆಟ್ಟದಿಂದ ಬಂದು, ಸೇಯೀರಿನಿಂದ ಅವರ ಮೇಲೆ ಉದಯಿಸಿದರು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದರು. ದೇವರು ದಕ್ಷಿಣದ ತಮ್ಮ ಪರ್ವತ ಶ್ರೇಣಿಯಿಂದ ಲಕ್ಷಾಂತರ ಪರಿಶುದ್ಧರ ಸಂಗಡ ಬಂದರು.</verse>
				<verse number="3">ನಿಶ್ಚಯವಾಗಿ ನೀವು ಜನರನ್ನು ಪ್ರೀತಿಸುತ್ತೀರಿ. ಪರಿಶುದ್ಧ ಜನರು ನಿಮ್ಮ ಆಶ್ರಯದಲ್ಲಿಯೇ ಇದ್ದಾರೆ. ನಿಮ್ಮ ಪಾದಗಳಿಗೆ ಎಲ್ಲರೂ ಎರಗುವರು. ನಿಮ್ಮಿಂದಲೇ ಬೋಧನೆ ಪಡೆಯುವರು.</verse>
				<verse number="4">ಯಾಕೋಬನ ಸಂತತಿಯವರಾದ ನಮಗೆ, ಮೋಶೆಯು ನಿಯಮವನ್ನು ಸೊತ್ತಾಗಿ ಕೊಟ್ಟಿದ್ದಾನೆ.</verse>
				<verse number="5">ಇಸ್ರಾಯೇಲರ ಮುಖ್ಯಸ್ಥರೂ ಅವರ ಗೋತ್ರಗಳು ಒಟ್ಟಾಗಿ ಸೇರಿಬಂದಾಗ, ದೇವರೇ ಯೆಶುರೂನಿನ ಮೇಲೆ ಅರಸನಾಗಿದ್ದರು.</verse>
				<verse number="6">“ರೂಬೇನನು ಸಾಯದೆ ಬದುಕಲಿ. ಅವನ ಜನರು ಕಡಿಮೆಯಾಗದಿರಲಿ.”</verse>
				<verse number="7">ಯೆಹೂದನ ಬಗ್ಗೆ ಮೋಶೆ ಹೇಳಿದ ಮಾತಿದು: “ಯೆಹೋವ ದೇವರೇ, ಯೆಹೂದನ ಮೊರೆಯನ್ನಾಲಿಸಿ, ಅವರನ್ನು ಅವರ ಬಂಧುಗಳೊಡನೆ ಸೇರಿಸಿರಿ. ಅವನ ಸ್ವಂತ ಕೈಗಳೇ ತನ್ನ ಹಕ್ಕು ಬಾಧ್ಯತೆಗಳನ್ನು ಕಾದಿರಿಸುತ್ತವೆ. ಅವನ ಶತ್ರುಗಳಿಂದ ಅವನನ್ನು ತಪ್ಪಿಸಿರಿ.”</verse>
				<verse number="8">ಲೇವಿ ಕುಲದ ವಿಷಯದಲ್ಲಿ ಹೇಳಿದ್ದೇನೆಂದರೆ: “ನಿಮ್ಮ ನಿರ್ಣಯವನ್ನು ತಿಳಿಸುವ ಊರೀಮ್, ತುಮ್ಮೀಮ್ ಎಂಬ ವಸ್ತುಗಳು ನಿಮ್ಮ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀವು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿರಿ. ಮೆರೀಬಾದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದ ಮಾಡಿದಿರಿ.</verse>
				<verse number="9">ಅವನು ತನ್ನ ತಂದೆತಾಯಿಗಳ ಬಗ್ಗೆ, ‘ಅವರಿಗಾಗಿ ನನಗೆ ಗೌರವವಿಲ್ಲ.’ ಅವನು ತನ್ನ ಸಹೋದರರನ್ನೂ ಗುರುತಿಸಲಿಲ್ಲ ತನ್ನ ಸ್ವಂತ ಮಕ್ಕಳನ್ನೂ ಅರಿಯಲಿಲ್ಲ, ಏಕೆಂದರೆ ಅವನು ನಿಮ್ಮ ವಾಕ್ಯವನ್ನು ಕೈಗೊಂಡು ನಿಮ್ಮ ಒಡಂಬಡಿಕೆಯನ್ನು ಕಾಪಾಡಿದ್ದಾನೆ.</verse>
				<verse number="10">ಅವನು ಯಾಕೋಬನಿಗೆ ನಿಮ್ಮ ಸೂತ್ರಗಳನ್ನೂ, ಇಸ್ರಾಯೇಲರಿಗೆ ನಿಮ್ಮ ನಿಯಮವನ್ನೂ ಬೋಧಿಸುವನು. ನಿಮ್ಮ ಮುಂದೆ ಧೂಪವನ್ನೂ ನಿಮ್ಮ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಸಮರ್ಪಿಸುವನು.</verse>
				<verse number="11">ಯೆಹೋವ ದೇವರೇ, ಅವನ ಎಲ್ಲ ಕೌಶಲ್ಯಗಳನ್ನು ಆಶೀರ್ವದಿಸಿರಿ. ಅವನ ಕೈಕೆಲಸವನ್ನು ಅಂಗೀಕರಿಸಿರಿ. ಅವನಿಗೆ ವಿರೋಧವಾಗಿ ಏಳುವವರ ನಡು ಮುರಿದು ಹೋಗಲಿ. ಅವನನ್ನು ದ್ವೇಷಿಸುವವರು ತಿರುಗಿ ಏಳದ ಹೋಗಲಿ.”</verse>
				<verse number="12">ಮೋಶೆಯು ಬೆನ್ಯಾಮೀನನ ವಿಷಯವಾಗಿ ಹೇಳಿದ್ದೇನೆಂದರೆ: “ಯೆಹೋವ ದೇವರಿಗೆ ಪ್ರಿಯನಾದ ಇವನು ದೇವರ ಬಳಿಯಲ್ಲಿ ಸುರಕ್ಷಿತವಾಗಿ ವಾಸಮಾಡುವನು. ದೇವರು ಅವನಿಗೆ ದಿನವೆಲ್ಲಾ ಆಸರೆಯಾಗಿರುವರು. ಅವನು ದೇವರ ಭುಜಗಳ ನಡುವೆ ವಿಶ್ರಾಂತಿ ಪಡೆಯುವನು.”</verse>
				<verse number="13">ಯೋಸೇಫನ ವಿಷಯವಾಗಿ ಹೇಳಿದ್ದೇನೆಂದರೆ: “ಅವನ ದೇಶವು ಆಕಾಶದ ಅಮೂಲ್ಯವಾದ ಮಂಜಿನಿಂದಲೂ, ಕೆಳಗೆ ಸಾಗರ ಸೆಲೆಯಿಂದಲೂ ಯೆಹೋವ ದೇವರ ಆಶೀರ್ವಾದ ಹೊಂದಲಿ.</verse>
				<verse number="14">ಸೂರ್ಯನು ತರುವ ಉತ್ಕೃಷ್ಟವಾದವುಗಳಿಂದಲೂ ಚಂದ್ರನು ದಯಪಾಲಿಸುವ ಅಮೂಲ್ಯವಾದವುಗಳಿಂದಲೂ</verse>
				<verse number="15">ಪುರಾತನ ಪರ್ವತಗಳಿಂದ ದೊರೆಯುವ ಅತ್ಯುತ್ತಮ ಕಾಣಿಕೆಗಳಿಂದಲೂ ಶಾಶ್ವತ ಪರ್ವತಗಳಿಂದ ಸಿಗುವ ಒಳಿತುಗಳಿಂದಲೂ,</verse>
				<verse number="16">ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆಯುವ ಫಲಗಳಲ್ಲಿ ಉತ್ಕೃಷ್ಟವಾದುದೆಲ್ಲವೂ ಸುಡುವ ಪೊದೆಯಲ್ಲಿ ವಾಸವಾಗಿದ್ದ ದೇವರ ದಯೆಯೂ ಯೋಸೇಫನ ತಲೆಯ ಮೇಲೆ ನೆಲೆಗೊಳ್ಳಲಿ. ಅವನು ತನ್ನ ಸಹೋದರರಲ್ಲಿ ರಾಜಕುಮಾರನಾಗಿರುವನು. ಕುಲದವರ ಶಿರಸ್ಸಾಗಿರುವ ಅವನ ಮೇಲೆ ಆಶೀರ್ವಾದ ಉಂಟಾಗಲಿ.</verse>
				<verse number="17">ಅವನ ವೈಭವವು ಚೊಚ್ಚಲ ಹೋರಿಯಂತೆ ಇರುವುದು, ಅವನ ಕೊಂಬುಗಳು ಕಾಡುಕೋಣಗಳ ಕೊಂಬುಗಳಂತೆ ಇರುವುದು. ಇವುಗಳಿಂದ ಜನಾಂಗಗಳನ್ನೆಲ್ಲಾ ಇರಿದು ಒಟ್ಟಿಗೆ ಭೂಮಿಯ ಅಂಚಿನವರೆಗೆ ಓಡಿಸುವನು. ಎಫ್ರಾಯೀಮ್ ಕುಲದ ಹತ್ತು ಸಾವಿರ ಜನರೂ ಇಂಥವರೇ. ಮನಸ್ಸೆ ಕುಲದ ಸಹಸ್ರ ಜನರೂ ಇಂಥವರೇ ಆಗಿದ್ದಾರೆ.”</verse>
				<verse number="18">ಮೋಶೆಯು ಜೆಬುಲೂನರ ವಿಷಯವಾಗಿ ಹೇಳಿದ್ದೇನೆಂದರೆ: “ಜೆಬೂಲೂನನೇ, ನಿನ್ನ ಪ್ರಯಾಣದಲ್ಲಿ ಸಂತೋಷಪಡು. ಇಸ್ಸಾಕಾರನೇ, ನಿನ್ನ ಗುಡಾರಗಳಲ್ಲಿ ಸಂತೋಷಪಡು.</verse>
				<verse number="19">ಅವರು ಜನರನ್ನು ಬೆಟ್ಟಕ್ಕೆ ಕರೆಯಿಸಿ, ಅಲ್ಲಿ ನೀತಿಯ ಬಲಿಗಳನ್ನು ಅರ್ಪಿಸುವರು. ಏಕೆಂದರೆ ಅವರು ಸಮುದ್ರದಿಂದ ಐಶ್ವರ್ಯವನ್ನು ಹೊಂದಿ ಮರಳಿನಲ್ಲಿ ಅಡಗಿರುವ ಸಂಪತ್ತನ್ನು ಪಡೆಯುವರು.”</verse>
				<verse number="20">ಮೋಶೆಯು ಗಾದನ ವಿಷಯವಾಗಿ ಹೇಳಿದ್ದೇನೆಂದರೆ: “ಗಾದನ ರಾಜ್ಯವನ್ನು ವಿಸ್ತಾರ ಮಾಡಿದ ದೇವರು ಸ್ತುತಿಹೊಂದಲಿ. ಅವನು ಸಿಂಹದಂತೆ ಜೀವಿಸಿ ತೋಳನ್ನೂ ಶಿರಸ್ಸನ್ನೂ ಮುರಿಯುವನು.</verse>
				<verse number="21">ಅವನು ಉತ್ತಮವಾದ ನಾಡನ್ನು ತನಗಾಗಿ ಆಯ್ದುಕೊಂಡನು. ನಾಯಕರ ಪಾಲು ಅವನಿಗಾಗಿ ದೊರಕಿತು. ಅವನು ಜನರ ಮುಖ್ಯಸ್ಥರ ಸಂಗಡ ಬಂದು, ಇಸ್ರಾಯೇಲರೊಡನೆ ಯೆಹೋವ ದೇವರ ನೀತಿಯನ್ನೂ ದೇವರ ನ್ಯಾಯಗಳನ್ನೂ ಸ್ಥಾಪಿಸಿದನು.”</verse>
				<verse number="22">ಮೋಶೆಯು ದಾನನ ವಿಷಯವಾಗಿ ಹೇಳಿದ್ದೇನೆಂದರೆ: “ದಾನನು ಬಾಷಾನಿನಿಂದ ಹಾರಿಬರುವ, ಪ್ರಾಯದ ಸಿಂಹದಂತಿದ್ದಾನೆ.”</verse>
				<verse number="23">ಮೋಶೆಯು ನಫ್ತಾಲಿಯ ವಿಷಯವಾಗಿ ಹೇಳಿದ್ದೇನೆಂದರೆ: “ನಫ್ತಾಲಿಯೇ, ಯೆಹೋವ ದೇವರ ಅನುಗ್ರಹದಿಂದ ತೃಪ್ತನಾದವನೇ, ದೇವರ ಆಶೀರ್ವಾದದಿಂದ ತುಂಬಿದವನೇ; ಸಮುದ್ರವೂ ದಕ್ಷಿಣ ಪ್ರದೇಶವೂ ನಿನಗೆ ಸೊತ್ತಾಗಲಿ.”</verse>
				<verse number="24">ಮೋಶೆ ಆಶೇರನ ವಿಷಯವಾಗಿ ಹೇಳಿದ್ದೇನೆಂದರೆ: “ಪುತ್ರರಲ್ಲಿಯೇ ಶ್ರೇಷ್ಠನಾದ ಆಶೇರನು ಭಾಗ್ಯ ಹೊಂದಲಿ. ಅವನ ಸಹೋದರರು ಅವನನ್ನು ಮೆಚ್ಚಿಕೊಳ್ಳಲಿ, ಎಣ್ಣೆಯಲ್ಲಿ ಪಾದಸ್ನಾನ ಮಾಡುವಂತಾಗಲಿ.</verse>
				<verse number="25">ನಿನ್ನ ದ್ವಾರಗಳ ಅಗುಳಿಗಳು ಕಬ್ಬಿಣದ ಮತ್ತು ಕಂಚಿನವುಗಳು ಆಗಿರಲಿ. ನಿನ್ನ ಜೀವಮಾನಕಾಲವೆಲ್ಲಾ ನಿನಗೆ ಬಲವಿರುವುದು.</verse>
				<verse number="26">“ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ದೇವರು ನಿನ್ನ ಸಹಾಯಕ್ಕೆ ಆಕಾಶವನ್ನೇರಿ ಮೇಘಾರೂಢನಾಗಿ ತಮ್ಮ ಘನತೆಯಲ್ಲಿ ಬರುತ್ತಾರೆ.</verse>
				<verse number="27">ನಿತ್ಯ ದೇವರು ನಿನ್ನ ಆಶ್ರಯವು. ದೇವರ ಶಾಶ್ವತ ತೋಳುಗಳು ನಿನಗೆ ಆಶ್ರಯ. ನಿನ್ನ ವೈರಿಗಳನ್ನು ನಿನ್ನ ಮುಂದೆ ಓಡಿಸಿ, ‘ಅವರನ್ನು ಸಂಹರಿಸಿರಿ,’ ಎಂದು ಆಜ್ಞಾಪಿಸುವರು.</verse>
				<verse number="28">ಆದಕಾರಣ ಆಕಾಶದಿಂದ ಮಂಜನ್ನು ಸುರಿಯುವ, ಧಾನ್ಯ, ಹೊಸ ದ್ರಾಕ್ಷಾರಸ ಸಮೃದ್ಧಿಯಾಗಿರುವ ನಾಡಿನಲ್ಲಿ, ಯಾಕೋಬನ ವಂಶದವರು ಸುರಕ್ಷಿತರಾದರು. ಇಸ್ರಾಯೇಲರು ನಿರ್ಭಯವಾಗಿ ವಾಸಿಸುವವರಾದರು.</verse>
				<verse number="29">ಇಸ್ರಾಯೇಲರೇ, ನೀವು ಎಷ್ಟೋ ಧನ್ಯರು. ಯೆಹೋವ ದೇವರಿಂದ ರಕ್ಷಣೆಹೊಂದಿದ ಜನಾಂಗವೇ ನಿಮ್ಮಂತೆ ಯಾರಿದ್ದಾರೆ? ದೇವರೇ ನಿಮಗೆ ಗುರಾಣಿ ಹಾಗೂ ಸಹಾಯಕ. ದೇವರು ನಿಮ್ಮ ಮಹಿಮಾ ಖಡ್ಗ. ನಿಮ್ಮ ವೈರಿಗಳು ನಿಮ್ಮ ಮುಂದೆ ಮುದುರಿಕೊಳ್ಳುವರು ಮತ್ತು ಅವರ ಉನ್ನತ ಸ್ಥಳಗಳನ್ನು ನೀವು ತುಳಿದುಬಿಡುವಿರಿ.”</verse>
			</chapter>
			<chapter number="34">
				<verse number="1">ಆಗ ಮೋಶೆ ಮೋವಾಬಿನ ಬಯಲಿನಿಂದ ನೆಬೋ ಪರ್ವತಕ್ಕೆ ಯೆರಿಕೋವಿಗೆ ಎದುರಾಗಿರುವ ಪಿಸ್ಗಾದ ಶಿಖರಕ್ಕೆ ಏರಿಹೋದನು. ಅಲ್ಲಿ ಯೆಹೋವ ದೇವರು ಅವನಿಗೆ ದೇಶವನ್ನೆಲ್ಲಾ ದಾನಿನವರೆಗಿರುವ ಗಿಲ್ಯಾದನ್ನೂ</verse>
				<verse number="2">ಎಲ್ಲಾ ನಫ್ತಾಲಿಯನ್ನೂ ಸಮಸ್ತ ಎಫ್ರಾಯೀಮ್, ಮನಸ್ಸೆಯ ದೇಶವನ್ನೂ, ಸಮುದ್ರದ ಕಟ್ಟಕಡೆಯವರೆಗಿರುವ ಸಮಸ್ತ ಯೆಹೂದ ದೇಶವನ್ನೂ,</verse>
				<verse number="3">ನೆಗೆವನ್ನೂ ಖರ್ಜೂರಗಳ ಪಟ್ಟಣವಾದ ಯೆರಿಕೋ ಕಣಿವೆಯ ಬಯಲನ್ನೂ, ಚೋಗರ್ ಊರಿನ ತನಕ ತೋರಿಸಿದರು.</verse>
				<verse number="4">ಅನಂತರ ಯೆಹೋವ ದೇವರು ಅವನಿಗೆ, “ಅಬ್ರಹಾಮನಿಗೂ ಅವನ ಸಂತತಿಗೂ ಕೊಡುತ್ತೇನೆಂದು ನಾನು ಇಸಾಕನಿಗೂ, ಯಾಕೋಬನಿಗೂ ಪ್ರಮಾಣ ಮಾಡಿದ ದೇಶವು ಇದೇ. ಇದನ್ನು ನಿನಗೆ ತೋರಿಸಿದೆನು. ಆದರೆ ನೀನು ಅಲ್ಲಿಗೆ ಸೇರುವುದಿಲ್ಲ,” ಎಂದು ಹೇಳಿದರು.</verse>
				<verse number="5">ಯೆಹೋವ ದೇವರ ಮಾತಿನ ಹಾಗೆ ಅವರ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಮರಣಹೊಂದಿದನು.</verse>
				<verse number="6">ದೇವರು ಅವನನ್ನು ಮೋವಾಬಿನ ದೇಶದ ಬೇತ್ ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೂಣಿಟ್ಟರು. ಆದರೆ ಅವನ ಸಮಾಧಿ ಎಲ್ಲಿದೆಯೆಂದು ಇಂದಿನವರೆಗೆ ಯಾರಿಗೂ ಗೊತ್ತಿಲ್ಲ.</verse>
				<verse number="7">ಮೋಶೆಯು ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ. ಅವನ ಬಲ ಕುಂದಿಹೋಗಿರಲಿಲ್ಲ.</verse>
				<verse number="8">ಇಸ್ರಾಯೇಲರು ಮೋವಾಬಿನ ಬಯಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ದುಃಖಿಸಿದರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಸಂತಾಪದ ದಿವಸಗಳು ಮುಗಿದವು.</verse>
				<verse number="9">ಇದಲ್ಲದೆ ನೂನನ ಮಗ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದವನಾಗಿದ್ದನು. ಏಕೆಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರು ಯೆಹೋಶುವನ ಮಾತು ಕೇಳಿದರು.</verse>
				<verse number="10">ಯೆಹೋವ ದೇವರ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದ ಮೋಶೆಯಂಥ ಪ್ರವಾದಿ ಇಸ್ರಾಯೇಲರಲ್ಲಿ ಮತ್ತೆ ಹುಟ್ಟಲೇ ಇಲ್ಲ.</verse>
				<verse number="11">ಈಜಿಪ್ಟಿನಲ್ಲಿ ಫರೋಹನ ಮುಂದೆಯೂ, ಅವನ ಎಲ್ಲಾ ಅಧಿಕಾರಿಗಳ ಮುಂದೆಯೂ, ಜನರ ಮುಂದೆಯೂ ಸೂಚಕಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ಮಾಡುವುದಕ್ಕೆ ಯೆಹೋವ ದೇವರು ಮೋಶೆಯನ್ನು ಕಳುಹಿಸಿದ್ದರು.</verse>
				<verse number="12">ಇಸ್ರಾಯೇಲರ ಮುಂದೆ ಮೋಶೆಯು ನಡೆಸಿದ ವಿಶೇಷವಾದ ಕಾರ್ಯಗಳನ್ನು ಮತ್ತು ಭುಜಪರಾಕ್ರಮವನ್ನು ಯಾರೂ ಎಂದೂ ತೋರಿಸಿರಲಿಲ್ಲ ಅಥವಾ ಮಾಡಿರಲ್ಲ.</verse>
			</chapter>
		</book>
		<book number="6">
			<chapter number="1">
				<verse number="1">ಯೆಹೋವ ದೇವರ ಸೇವಕನಾದ ಮೋಶೆಯ ಮರಣದ ತರುವಾಯ, ನೂನನ ಮಗ ಮತ್ತು ಮೋಶೆಯ ಸೇವಕ ಆಗಿರುವ ಯೆಹೋಶುವನಿಗೆ ಯೆಹೋವ ದೇವರು:</verse>
				<verse number="2">“ನನ್ನ ಸೇವಕನಾದ ಮೋಶೆಯು ಮರಣಹೊಂದಿದನು. ಈಗ ನೀನು ಇಸ್ರಾಯೇಲರಾದ ಈ ಜನರೆಲ್ಲರ ಸಹಿತವಾಗಿ ಎದ್ದು, ಯೊರ್ದನ್ ನದಿಯನ್ನು ದಾಟಿ, ಇಸ್ರಾಯೇಲರಿಗೆ ನಾನು ಕೊಡುವ ದೇಶಕ್ಕೆ ಹೋಗು.</verse>
				<verse number="3">ನಾನು ಮೋಶೆಗೆ ವಾಗ್ದಾನ ಮಾಡಿದ ಪ್ರಕಾರ ನೀವು ಪಾದವಿಡುವ ಎಲ್ಲಾ ಸ್ಥಳವನ್ನು ನಾನು ನಿಮಗೆ ಕೊಟ್ಟಿದ್ದೇನೆ.</verse>
				<verse number="4">ಮರುಭೂಮಿಯೂ ಈ ಲೆಬನೋನ್ ಮೊದಲುಗೊಂಡು ಯೂಫ್ರೇಟೀಸ್ ಮಹಾ ನದಿಯವರೆಗೆ ಇರುವ ಹಿತ್ತಿಯರ ದೇಶವೆಲ್ಲಾ ನಿಮ್ಮದಾಗುವುದು. ನಿಮ್ಮ ಸೀಮೆ ಸೂರ್ಯನು ಅಸ್ತಮಿಸುವ ಮಹಾಸಾಗರದವರೆಗೂ ವಿಸ್ತರಿಸಿಕೊಳ್ಳುವುದು.</verse>
				<verse number="5">ನೀನು ಜೀವಿಸುವ ದಿವಸಗಳಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಮರೆಯುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ.</verse>
				<verse number="6">ಬಲಿಷ್ಠನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರಿಗೆ ಅವರ ತಂದೆಗಳಿಗೆ ಕೊಡುವೆನೆಂದು ಆಣೆ ಇಟ್ಟ ದೇಶವನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ.</verse>
				<verse number="7">“ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ದೇವರ ನಿಯಮದ ಪ್ರಕಾರ ನೀನು ಕೈಗೊಂಡು ನಡೆಯುವ ಹಾಗೆ ಬಲಿಷ್ಠನಾಗಿರು, ಧೈರ್ಯದಿಂದಿರು. ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ, ಅದನ್ನು ಬಿಟ್ಟು ಬಲಕ್ಕಾದರೂ, ಎಡಕ್ಕಾದರೂ ತಿರುಗಬೇಡ.</verse>
				<verse number="8">ಈ ದೇವರ ನಿಯಮವು ನಿನ್ನ ಬಾಯಿಂದ ತೊಲಗಬಾರದು, ಅದರಲ್ಲಿ ಬರೆದಿರುವ ಪ್ರಕಾರವೇ ಕೈಗೊಂಡು ನಡೆಯುವ ಹಾಗೆ ಹಗಲುರಾತ್ರಿ ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವು ಸಮೃದ್ಧಿಯಾಗಿ ನೀನು ಜಯಶಾಲಿಯಾಗುವೆ.</verse>
				<verse number="9">ನಾನು ನಿನಗೆ ಆಜ್ಞಾಪಿಸಿದ್ದೇನಲ್ಲಾ, ಬಲಿಷ್ಠನಾಗಿರು. ಧೈರ್ಯದಿಂದಿರು, ಭಯಪಡಬೇಡ, ನಿರುತ್ಸಾಹಗೊಳ್ಳಬೇಡ. ಏಕೆಂದರೆ ನೀನು ಹೋಗುವ ಕಡೆಯೆಲ್ಲಾ ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದು ಹೇಳಿದರು.</verse>
				<verse number="10">ಆಗ ಯೆಹೋಶುವನು ಅಧಿಕಾರಿಗಳಿಗೆ ಆಜ್ಞಾಪಿಸಿ:</verse>
				<verse number="11">“ನೀವು ಪಾಳೆಯದ ಮಧ್ಯದಲ್ಲಿ ನಡೆದುಹೋಗಿ ಜನರಿಗೆ, ‘ನಿಮಗೋಸ್ಕರ ಆಹಾರವನ್ನು ಸಿದ್ಧಮಾಡಿಕೊಳ್ಳಿರಿ, ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಟ್ಟಿರುವ ದೇಶವನ್ನು ನೀವು ಸ್ವಾಧೀನಮಾಡಿಕೊಳ್ಳಲು ಇನ್ನು ಮೂರು ದಿವಸಗಳಲ್ಲಿ ಯೊರ್ದನ್ ನದಿಯನ್ನು ದಾಟಿ ಹೋಗಬೇಕು,’ ಎಂದು ತಿಳಿಸಿರಿ,” ಎಂದನು.</verse>
				<verse number="12">ಇದಲ್ಲದೆ ಯೆಹೋಶುವನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಯ ಅರ್ಧ ಗೋತ್ರದವರಿಗೂ,</verse>
				<verse number="13">“ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ವಾಕ್ಯವನ್ನು ಜ್ಞಾಪಕಮಾಡಿಕೊಳ್ಳಿರಿ. ‘ನಿಮ್ಮ ದೇವರಾದ ಯೆಹೋವ ದೇವರು ಈ ದೇಶವನ್ನು ನಿಮಗೆ ಕೊಟ್ಟು ನಿಮ್ಮನ್ನು ವಿಶ್ರಾಂತಿಪಡಿಸಿದ್ದಾರೆ.’</verse>
				<verse number="14">ನಿಮ್ಮ ಹೆಂಡತಿಯರೂ ಮಕ್ಕಳೂ ಪಶುಗಳು ಮೋಶೆ ನಿಮಗೆ ಕೊಟ್ಟ ಯೊರ್ದನ್ ನದಿಯ ಈಚೆ ಇರುವ ದೇಶದಲ್ಲೇ ಇರಲಿ. ಆದರೆ ನಿಮ್ಮಲ್ಲಿ ಇರುವ ಪರಾಕ್ರಮಶಾಲಿಗಳೆಲ್ಲಾ ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರ ಮುಂದೆ ಹೊರಟು, ನದಿದಾಟಿ,</verse>
				<verse number="15">ಯೆಹೋವ ದೇವರು ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನು ವಿಶ್ರಾಂತಿಪಡಿಸಿ, ಅವರು ನಿಮ್ಮ ದೇವರಾದ ಯೆಹೋವ ದೇವರು ತಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳುವವರೆಗೆ ಅವರಿಗೆ ಸಹಾಯಮಾಡಬೇಕು. ತರುವಾಯ ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿಯ ಈಚೆಯಲ್ಲಿ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ನಿಮಗೆ ಕೊಟ್ಟ ನಿಮ್ಮ ಸೊತ್ತಾಗಿರುವ ದೇಶಕ್ಕೆ ತಿರುಗಿಬಂದು, ಅದನ್ನು ಸ್ವಾಧೀನಮಾಡಿಕೊಂಡು, ಅದನ್ನು ಅನುಭವಿಸಿರಿ,” ಎಂದನು.</verse>
				<verse number="16">ಆಗ ಅವರು ಯೆಹೋಶುವನಿಗೆ ಉತ್ತರವಾಗಿ, “ನೀನು ನಮಗೆ ಆಜ್ಞಾಪಿಸುವುದನ್ನೆಲ್ಲಾ ಮಾಡುವೆವು. ಎಲ್ಲಿಗೆ ಕಳುಹಿಸುತ್ತೀಯೋ, ಅಲ್ಲಿಗೆ ಹೋಗುವೆವು.</verse>
				<verse number="17">ನಾವು ಮೋಶೆಯ ಎಲ್ಲಾ ಮಾತು ಕೇಳಿದ ಹಾಗೆಯೇ ನಿನ್ನ ಮಾತು ಕೇಳುವೆವು. ನಿನ್ನ ದೇವರಾದ ಯೆಹೋವ ದೇವರು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.</verse>
				<verse number="18">ನೀನು ಆಜ್ಞಾಪಿಸುವ ಎಲ್ಲದರಲ್ಲಿ ಯಾರು ನಿನ್ನ ಮಾತುಗಳನ್ನು ಕೇಳದೆ, ನಿನ್ನ ಬಾಯಿ ಮಾತಿಗೆ ಎದುರು ಬೀಳುವರೋ ಅವರು ಮರಣಕ್ಕೆ ಗುರಿಯಾಗಬೇಕು. ಬಲಿಷ್ಠನಾಗಿರು, ಧೈರ್ಯದಿಂದಿರು,” ಎಂದರು.</verse>
			</chapter>
			<chapter number="2">
				<verse number="1">ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಶಿಟ್ಟೀಮಿನಿಂದ ಗುಪ್ತವಾಗಿ ಕಳುಹಿಸಿ, ಅವರಿಗೆ, “ನೀವು ಹೋಗಿ ದೇಶವನ್ನೂ, ವಿಶೇಷವಾಗಿ ಯೆರಿಕೋ ಪಟ್ಟಣವನ್ನೂ ಸುತ್ತಿ ನೋಡಿರಿ,” ಎಂದನು. ಅವರು ಹೋಗಿ ರಾಹಾಬಳೆಂಬ ಹೆಸರುಳ್ಳ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದು ಅಲ್ಲಿಯೇ ಉಳಿದುಕೊಂಡರು.</verse>
				<verse number="2">ಯೆರಿಕೋವಿನ ಅರಸನಿಗೆ, “ಇಗೋ, ಇಸ್ರಾಯೇಲರಲ್ಲಿ ಕೆಲವರು ದೇಶವನ್ನು ಗೂಢಚಾರ ಮಾಡಲು ರಾತ್ರಿಯಲ್ಲಿ ಇಲ್ಲಿಗೆ ಬಂದಿದ್ದಾರೆ,” ಎಂದು ತಿಳಿಸಲಾಯಿತು.</verse>
				<verse number="3">ಆಗ ಯೆರಿಕೋವಿನ ಅರಸನು ರಾಹಾಬಳಿಗೆ, “ನಿನ್ನ ಬಳಿಗೆ ಬಂದು ನಿನ್ನ ಮನೆಯಲ್ಲಿ ಪ್ರವೇಶಿಸಿದ ಮನುಷ್ಯರನ್ನು ಹೊರಗೆ ಕರೆದುಕೊಂಡು ಬಾ. ಏಕೆಂದರೆ ಅವರು ದೇಶವನ್ನೆಲ್ಲಾ ಗೂಢಚಾರ ಮಾಡಲು ಬಂದಿದ್ದಾರೆ,” ಎಂದನು.</verse>
				<verse number="4">ಆದರೆ ಆ ಸ್ತ್ರೀಯು ಆ ಇಬ್ಬರನ್ನು ಅಡಗಿಸಿಟ್ಟು, “ನನ್ನ ಬಳಿಗೆ ಇಬ್ಬರು ಮನುಷ್ಯರು ಬಂದಿದ್ದರು. ಆದರೆ ನಾನು ಅವರನ್ನು ಯಾವ ಕಡೆಯವರೆಂದು ತಿಳಿಯದೆ ಇದ್ದೆನು.</verse>
				<verse number="5">ಪಟ್ಟಣದ ಬಾಗಿಲು ಮುಚ್ಚುವ ಮುಸ್ಸಂಜೆ ವೇಳೆಯಲ್ಲಿ ಆ ಮನುಷ್ಯರು ಹೊರಟು ಹೋದರು. ಅವರು ಎಲ್ಲಿ ಹೋದರೋ ನಾನು ಅರಿಯೆ. ಅವರನ್ನು ಬೇಗ ಹಿಂದಟ್ಟಿರಿ. ನಿಮಗೆ ಸಿಕ್ಕುವರು,” ಎಂದಳು.</verse>
				<verse number="6">ಆದರೆ ಆಕೆಯು ಅವರನ್ನು ಮಾಳಿಗೆಯ ಮೇಲೆ ಏರಿಸಿ, ಅಲ್ಲಿ ಸಾಲಾಗಿ ಇಟ್ಟಿದ್ದ ಸೆಣಬಿನೊಳಗೆ ಬಚ್ಚಿಟ್ಟಿದ್ದಳು.</verse>
				<verse number="7">ಆ ಮನುಷ್ಯರು ಯೊರ್ದನ್ ನದಿ ದಾರಿ ಹಿಡಿದು ಹೋಗಿ ನದಿ ದಾಟುವ ಸ್ಥಳದವರೆಗೂ ಅವರನ್ನು ಹಿಂದಟ್ಟಿದರು. ಅವರನ್ನು ಹಿಂದಟ್ಟುವವರು ಹೊರಟುಹೋದ ಕೂಡಲೆ, ಪಟ್ಟಣದ ಹೆಬ್ಬಾಗಿಲು ಮುಚ್ಚಿದರು.</verse>
				<verse number="8">ಗೂಢಚಾರರು ಮಲಗುವುದಕ್ಕಿಂತ ಮುಂಚೆ ಆಕೆಯು ಮಾಳಿಗೆಯ ಮೇಲಕ್ಕೇರಿ, ಅವರ ಬಳಿಗೆ ಬಂದು,</verse>
				<verse number="9">“ಯೆಹೋವ ದೇವರು ನಿಮಗೆ ದೇಶವನ್ನು ಕೊಟ್ಟಿದ್ದಾರೆಂದೂ, ನಿಮ್ಮ ನಿಮಿತ್ತ ನಮಗೆ ಮಹಾ ಭೀತಿಯಾಗಿದೆ ಎಂದೂ ನಿಮಗೋಸ್ಕರ ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆಂದೂ ನಾನು ಬಲ್ಲೆನು.</verse>
				<verse number="10">ನೀವು ಈಜಿಪ್ಟಿನಿಂದ ಹೊರಡುವಾಗ ಯೆಹೋವ ದೇವರು ಹೇಗೆ ನಿಮಗೋಸ್ಕರ ಕೆಂಪುಸಮುದ್ರದ ನೀರನ್ನು ಬತ್ತಿಹೋಗಮಾಡಿದ್ದನ್ನೂ, ನೀವು ಸಂಪೂರ್ಣ ನಿರ್ಮೂಲ ಮಾಡಿದ ಯೊರ್ದನ್ ನದಿ ಆಚೆಯಲ್ಲಿದ್ದ ಅಮೋರಿಯರ ಇಬ್ಬರು ಅರಸುಗಳಾದ ಸೀಹೋನನಿಗೂ, ಓಗನಿಗೂ ಮಾಡಿದ್ದನ್ನೂ ನಾವು ಕೇಳಿದ್ದೇವೆ.</verse>
				<verse number="11">ಇವುಗಳನ್ನು ನಾವು ಕೇಳಿದಾಗಲೇ ನಮ್ಮ ಹೃದಯವು ಕುಂದಿಹೋಯಿತು. ಇನ್ನು ನಿಮ್ಮ ನಿಮಿತ್ತ ಯಾವನಲ್ಲಿಯೂ ಧೈರ್ಯವಿಲ್ಲದೆ ಹೋಯಿತು. ನಿಮ್ಮ ದೇವರಾದ ಯೆಹೋವ ದೇವರೇ ಮೇಲಿರುವ ಪರಲೋಕದಲ್ಲಿಯೂ ಕೆಳಗಿರುವ ಭೂಮಿಯ ಮೇಲೆಯೂ ದೇವರಾಗಿದ್ದಾರೆ.</verse>
				<verse number="12">“ಈಗ ನೀವು ನನಗೊಂದು ಪ್ರಮಾಣಮಾಡಬೇಕು. ನಾನು ನಿಮಗೆ ದಯೆ ತೋರಿಸಿದ್ದರಿಂದ ನೀವು ನನಗೂ ನನ್ನ ತಂದೆಯ ಮನೆಗೂ ದಯೆ ತೋರಿಸಬೇಕು. ನನಗೆ ನಿಶ್ಚಯವಾದ ಗುರುತನ್ನು ಕೊಡಬೇಕು.</verse>
				<verse number="13">ನನ್ನ ತಂದೆಯನ್ನೂ ನನ್ನ ತಾಯಿಯನ್ನೂ, ನನ್ನ ಸಹೋದರರನ್ನೂ ನನ್ನ ಸಹೋದರಿಯರನ್ನೂ, ಅವರಲ್ಲಿರುವ ಎಲ್ಲರನ್ನೂ ಜೀವದಿಂದಿರಿಸಿ, ನಮ್ಮ ಪ್ರಾಣವನ್ನು ಸಾವಿನಿಂದ ತಪ್ಪಿಸಬೇಕು ಎಂದು ಯೆಹೋವ ದೇವರ ಮೇಲೆ ಪ್ರಮಾಣ ಮಾಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದಳು.</verse>
				<verse number="14">ಆಗ ಅವರು ಆಕೆಗೆ, “ನೀನು ಈ ನಮ್ಮ ಕಾರ್ಯವನ್ನು ಬಹಿರಂಗ ಮಾಡದೆ ಇದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿ ಇರುವೆವು. ಯೆಹೋವ ದೇವರು ನಮಗೆ ದೇಶವನ್ನು ಕೊಟ್ಟಾಗ, ಸತ್ಯದಿಂದಲೂ, ದಯೆಯಿಂದಲೂ ನಡೆದುಕೊಳ್ಳುವೆವು,” ಎಂದರು.</verse>
				<verse number="15">ಆಗ ಆಕೆಯು ಅವರನ್ನು ಹಗ್ಗದಿಂದ ಕಿಟಿಕಿಯ ಮೂಲಕ ಇಳಿಸಿಬಿಟ್ಟಳು. ಏಕೆಂದರೆ ಆಕೆಯ ಮನೆಯು ಪಟ್ಟಣದ ಗೋಡೆಯ ಮೇಲೆ ಇತ್ತು.</verse>
				<verse number="16">ಆಕೆಯು ಅವರಿಗೆ, “ನಿಮ್ಮನ್ನು ಹಿಂದಟ್ಟುವವರು ನಿಮಗೆ ಅಡ್ಡಬಾರದ ಹಾಗೆ ನೀವು ಬೆಟ್ಟಕ್ಕೆ ಹೋಗಿ, ಅವರು ತಿರುಗಿ ಬರುವವರೆಗೂ ಅಲ್ಲಿ ಮೂರು ದಿವಸ ಅಡಗಿಕೊಂಡಿದ್ದು, ತರುವಾಯ ನಿಮ್ಮ ಮಾರ್ಗವಾಗಿ ಹೋಗಿರಿ,” ಎಂದಳು.</verse>
				<verse number="17">ಆಗ ಆ ಮನುಷ್ಯರು ಆಕೆಗೆ, “ನೀನು ನಮ್ಮಿಂದ ಮಾಡಿಸಿದ ಈ ನಿನ್ನ ಪ್ರಮಾಣದಿಂದ ಬಿಡುಗಡೆಯಾಗಿರುವೆವು.</verse>
				<verse number="18">ಇಗೋ, ನಾವು ಈ ದೇಶದಲ್ಲಿ ಪ್ರವೇಶಿಸುವಾಗ, ನೀನು ನಮ್ಮನ್ನು ಇಳಿಸಿದ ಕಿಟಿಕಿಗೆ ಈ ಕಡುಗೆಂಪು ಹಗ್ಗವನ್ನು ಕಟ್ಟಿ, ನಿನ್ನ ತಂದೆಯನ್ನೂ, ನಿನ್ನ ತಾಯಿಯನ್ನೂ, ನಿನ್ನ ಸಹೋದರರನ್ನೂ, ನಿನ್ನ ತಂದೆಯ ಮನೆಯವರೆಲ್ಲರನ್ನೂ ನಿನ್ನ ಮನೆಯಲ್ಲಿ ಕೂಡಿಸಿಕೊಳ್ಳಬೇಕು.</verse>
				<verse number="19">ಯಾವನಾದರೂ ನಿನ್ನ ಮನೆಯ ಬಾಗಿಲಿನಿಂದ ಹೊರಗೆ ಹೊರಟು ಬೀದಿಗೆ ಬಂದರೆ, ಅವನ ರಕ್ತವು ಅವನ ತಲೆಯ ಮೇಲೆ ಇರುವುದು. ನಾವು ನಿರಪರಾಧಿಗಳಾಗಿರುವೆವು. ಆದರೆ ನಿನ್ನ ಸಂಗಡ ಮನೆಯಲ್ಲಿ ಇರುವ ಯಾವನ ಮೇಲಾದರೂ ಕೈ ಮಾಡಿದರೆ, ಅವನ ರಕ್ತ ಅಪರಾಧವು ನಮ್ಮ ತಲೆಯ ಮೇಲೆ ಇರುವುದು.</verse>
				<verse number="20">ಆದರೆ ನೀನು ಈ ನಮ್ಮ ಕಾರ್ಯವನ್ನು ಬಹಿರಂಗಪಡಿಸಿದರೆ, ನೀನು ನಮಗೆ ಇಟ್ಟ ಆಣೆಯಿಂದ ನಾವು ಬಿಡುಗಡೆಯಾಗಿರುವೆವು,” ಎಂದರು.</verse>
				<verse number="21">ಅದಕ್ಕೆ ಆಕೆಯು, “ನಿಮ್ಮ ಮಾತುಗಳ ಪ್ರಕಾರವೇ ಆಗಲಿ,” ಎಂದು ಹೇಳಿದಳು. ಅನಂತರ ಅವರನ್ನು ಕಳುಹಿಸಿಬಿಟ್ಟಳು. ಅವರು ಹೋದಾಗ, ಆ ಕಡುಗೆಂಪು ಹಗ್ಗವನ್ನು ಕಿಟಿಕಿಯಲ್ಲಿ ಕಟ್ಟಿದಳು.</verse>
				<verse number="22">ಅವರು ಹೋಗಿ ಬೆಟ್ಟಕ್ಕೆ ಸೇರಿ ಹಿಂದಟ್ಟುವವರು ತಿರುಗಿ ಬರುವವರೆಗೂ ಮೂರು ದಿನ ಅಲ್ಲೇ ಇದ್ದರು. ಹಿಂದಟ್ಟುವವರು ಮಾರ್ಗದಲ್ಲೆಲ್ಲಾ ಅವರನ್ನು ಹುಡುಕಿ ಕಾಣದೆ ಹೋದರು.</verse>
				<verse number="23">ಆಗ ಅವರಿಬ್ಬರು ಹಿಂದಿರುಗಿ ಬೆಟ್ಟದಿಂದ ಇಳಿದು, ನದಿಯನ್ನು ದಾಟಿ, ನೂನನ ಮಗ ಯೆಹೋಶುವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ಅವರಿಗೆ ವಿವರಿಸಿದರು.</verse>
				<verse number="24">ಅವರು ಯೆಹೋಶುವನಿಗೆ, “ನಿಶ್ಚಯವಾಗಿ ಯೆಹೋವ ದೇವರು ದೇಶವನ್ನೆಲ್ಲಾ ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾರೆ. ದೇಶದ ನಿವಾಸಿಗಳೆಲ್ಲರೂ ನಮ್ಮ ನಿಮಿತ್ತ ಕಂಗೆಟ್ಟು ಹೋಗಿದ್ದಾರೆ,” ಎಂದರು.</verse>
			</chapter>
			<chapter number="3">
				<verse number="1">ಯೆಹೋಶುವನು ಬೆಳಿಗ್ಗೆ ಎದ್ದು, ಅವನೂ, ಇಸ್ರಾಯೇಲರೆಲ್ಲರೂ ಶಿಟ್ಟೀಮಿನಿಂದ ಪ್ರಯಾಣಮಾಡಿ, ಯೊರ್ದನ್ ನದಿ ಬಳಿಗೆ ಬಂದು, ದಾಟುವುದಕ್ಕಿಂತ ಮುಂಚೆ ಅಲ್ಲಿ ಇಳಿದುಕೊಂಡರು.</verse>
				<verse number="2">ಮೂರು ದಿನಗಳಾದ ಮೇಲೆ ಅಧಿಕಾರಿಗಳು ಪಾಳೆಯದೊಳಗೆ ಹಾದು ಹೋಗಿ,</verse>
				<verse number="3">ಜನರಿಗೆ ಆಜ್ಞಾಪಿಸಿ, “ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯ ಮಂಜೂಷ ಹೊರುವುದನ್ನು ಕಾಣುವಾಗ ನೀವು ನಿಮ್ಮ ಸ್ಥಳದಿಂದ ಹೊರಟು ಅದರ ಹಿಂದೆ ಹೋಗಬೇಕು.</verse>
				<verse number="4">ಆದರೆ ನಿಮಗೂ ಅದಕ್ಕೂ ಸುಮಾರು ಎರಡು ಸಾವಿರ ಮೊಳ ಅಂತರ ಇರಬೇಕು. ಅದರ ಹತ್ತಿರ ಬರಬೇಡಿರಿ. ನೀವು ಹೋಗಬೇಕಾದ ಮಾರ್ಗ ನಿಮಗೆ ತಿಳಿಯುವುದು. ಏಕೆಂದರೆ ನೀವು ಆ ಮಾರ್ಗವಾಗಿ ಇದುವರೆಗೆ ಪ್ರಯಾಣ ಮಾಡಿರುವುದಿಲ್ಲ,” ಎಂದರು.</verse>
				<verse number="5">ಯೆಹೋಶುವನು ಜನರಿಗೆ, “ಇಂದು ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ, ನಾಳೆ ಯೆಹೋವ ದೇವರು ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ಮಾಡುವರು,” ಎಂದನು.</verse>
				<verse number="6">ಆಗ ಯೆಹೋಶುವನು ಯಾಜಕರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರಿಗೆ ಮುಂದಾಗಿ ಹೋಗಿರಿ,” ಎಂದನು. ಹಾಗೆಯೇ ಅವರು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದೆ ಹೊರಟರು.</verse>
				<verse number="7">ಯೆಹೋವ ದೇವರು ಯೆಹೋಶುವನಿಗೆ, “ನಾನು ಮೋಶೆಯ ಸಂಗಡ ಇದ್ದ ಪ್ರಕಾರ, ನಿನ್ನ ಸಂಗಡ ಇರುವುದನ್ನು ಇಸ್ರಾಯೇಲರೆಲ್ಲರೂ ತಿಳಿಯುವಂತೆ, ನಾನು ಈ ದಿನ ನಿನ್ನನ್ನು ಅವರ ಮುಂದೆ ಉನ್ನತಗೊಳಿಸುವೆನು.</verse>
				<verse number="8">ನೀನು ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನ್ ನದಿಯ ಅಂಚಿಗೆ ಬಂದಾಗ, ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು,” ಎಂದರು.</verse>
				<verse number="9">ಆಗ ಯೆಹೋಶುವನು ಇಸ್ರಾಯೇಲರಿಗೆ, “ನೀವು ಇಲ್ಲಿಗೆ ಬಂದು ನಿಮ್ಮ ದೇವರಾದ ಯೆಹೋವ ದೇವರ ವಾಕ್ಯಗಳನ್ನು ಕೇಳಿರಿ.</verse>
				<verse number="10">ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರುವುದನ್ನೂ, ಅವರು ಕಾನಾನ್ಯರನ್ನೂ, ಹಿತ್ತಿಯರನ್ನೂ, ಹಿವ್ವಿಯರನ್ನೂ, ಪೆರಿಜೀಯರನ್ನೂ, ಗಿರ್ಗಾಷಿಯರನ್ನೂ, ಅಮೋರಿಯರನ್ನೂ, ಯೆಬೂಸಿಯರನ್ನೂ ನಿಮ್ಮ ಮುಂದೆ ನಿಶ್ಚಯವಾಗಿ ಓಡಿಸಿಬಿಡುವುದನ್ನೂ ನೀವು ತಿಳಿಯುವಿರಿ.</verse>
				<verse number="11">ಇಗೋ, ಸಮಸ್ತ ಭೂಮಿಗೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದೆ ಯೊರ್ದನ್ ನದಿಯನ್ನು ದಾಟಿ ಹೋಗುವುದು.</verse>
				<verse number="12">ಆದ್ದರಿಂದ ಈಗ ಇಸ್ರಾಯೇಲ್ ಗೋತ್ರಗಳಲ್ಲಿ ಹನ್ನೆರಡು ಮಂದಿಯನ್ನು ಒಂದೊಂದು ಗೋತ್ರಕ್ಕೆ ಒಬ್ಬೊಬ್ಬರಾಗಿ ತೆಗೆದುಕೊಳ್ಳಿರಿ.</verse>
				<verse number="13">ಸಮಸ್ತ ಭೂಮಿಗೂ ಒಡೆಯರಾಗಿರುವ ಯೆಹೋವ ದೇವರ ಮಂಜೂಷವನ್ನು ಹೊರುವ ಯಾಜಕರ ಪಾದಗಳು ಯೊರ್ದನ್ ನದಿಯ ನೀರಲ್ಲಿ ಇಡುತ್ತಲೇ, ಮೇಲಿನಿಂದ ಹರಿದು ಬರುವ ನೀರು ಮುಂದೆ ಹರಿಯದೆ ಅಲ್ಲಿಯೇ ರಾಶಿಯಾಗಿ ನಿಲ್ಲುವುದು,” ಎಂದು ಹೇಳಿದನು.</verse>
				<verse number="14">ಆದ್ದರಿಂದ ಜನರು ಯೊರ್ದನ್ ನದಿಯನ್ನು ದಾಟಲು ತಮ್ಮ ಡೇರೆಗಳನ್ನು ಬಿಚ್ಚಿಕೊಂಡು ಹೊರಟರು. ಯಾಜಕರು ಒಡಂಬಡಿಕೆಯ ಮಂಜೂಷವನ್ನು ಜನರಿಗೆ ಮುಂದಾಗಿ ಹೊತ್ತುಕೊಂಡು ಹೋದರು.</verse>
				<verse number="15">ಎಂದಿನಂತೆ ಯೊರ್ದನ್ ನದಿಯು ಸುಗ್ಗಿಕಾಲದಲ್ಲಿ ದಡ ತುಂಬಿ ಹರಿಯುತ್ತಾ ಇತ್ತು. ಮಂಜೂಷವನ್ನು ಹೊರುವ ಯಾಜಕರ ಕಾಲುಗಳು ನೀರಿನ ಅಂಚಿನಲ್ಲಿ ಇಡುತ್ತಲೇ,</verse>
				<verse number="16">ಮೇಲಿಂದ ಇಳಿದು ಬರುವ ನೀರು ನಿಂತು ಬಹು ದೂರದಲ್ಲಿ ಚಾರೆತಾನಿಗೆ ಸಮೀಪವಾಗಿದ್ದ ಆದಾಮ್ ಪಟ್ಟಣಕ್ಕೆ ಬಂದು ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ಎಂಬ ಲವಣ ಸಮುದ್ರಕ್ಕೆ ಹರಿದುಹೋಯಿತು. ಆಗ ಜನರು ಯೆರಿಕೋವಿನ ಎದುರಾಗಿ ನದಿ ದಾಟಿದರು.</verse>
				<verse number="17">ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನ್ ನದಿಯ ಮಧ್ಯದಲ್ಲಿ ಒಣನೆಲದಲ್ಲಿ ದೃಢವಾಗಿ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲರೆಲ್ಲರೂ ಒಣನೆಲದ ಮೇಲೆ ನಡೆದರು. ಹೀಗೆ ಇಡೀ ರಾಷ್ಟ್ರವು ಯೊರ್ದನ್ ನದಿ ಆಚೆ ಸೇರಿತು.</verse>
			</chapter>
			<chapter number="4">
				<verse number="1">ಜನರೆಲ್ಲರು ಯೊರ್ದನ್ ನದಿಯ ಆಚೆಗೆ ದಾಟಿದ ಮೇಲೆ, ಯೆಹೋವ ದೇವರು ಯೆಹೋಶುವನೊಂದಿಗೆ ಮಾತನಾಡಿ,</verse>
				<verse number="2">“ನೀನು ಜನರಲ್ಲಿ ಪ್ರತಿ ಗೋತ್ರಕ್ಕೆ ಒಬ್ಬೊಬ್ಬನಂತೆ ಹನ್ನೆರಡು ಮಂದಿ ಗಂಡಸರನ್ನು ಆರಿಸಿಕೊಂಡು,</verse>
				<verse number="3">ಯೊರ್ದನ್ ನದಿ ಮಧ್ಯದಲ್ಲಿ ಯಾಜಕರ ಕಾಲುಗಳು ಸ್ಥಿರವಾಗಿ ನಿಂತ ಸ್ಥಳದಲ್ಲಿಂದ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಅವುಗಳನ್ನು ನಿಮ್ಮ ಸಂಗಡ ಆಚೆದಡಕ್ಕೆ ತಂದು, ನೀವು ಈ ರಾತ್ರಿಯಲ್ಲಿ ಇಳಿದುಕೊಳ್ಳುವ ಸ್ಥಳದಲ್ಲಿ ಅವುಗಳನ್ನು ಹಾಕಿರಿ ಎಂದು ಅವರಿಗೆ ಆಜ್ಞಾಪಿಸು,” ಎಂದರು.</verse>
				<verse number="4">ಆಗ ಯೆಹೋಶುವನು ಇಸ್ರಾಯೇಲರಲ್ಲಿ ಒಂದೊಂದು ಗೋತ್ರಕ್ಕೆ ಒಬ್ಬೊಬ್ಬನ ಪ್ರಕಾರ ತಾನು ಆರಿಸಿಕೊಂಡ ಹನ್ನೆರಡು ಮಂದಿ ಗಂಡಸರನ್ನು ಕರೆದನು.</verse>
				<verse number="5">ಯೆಹೋಶುವನು ಅವರಿಗೆ, “ನೀವು ಯೊರ್ದನ್ ನದಿ ಮಧ್ಯದಲ್ಲಿ ನಿಮ್ಮ ದೇವರಾದ ಯೆಹೋವ ದೇವರ ಮಂಜೂಷದ ಮುಂದೆ ಇಸ್ರಾಯೇಲರ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಒಬ್ಬೊಬ್ಬನೂ ಒಂದೊಂದು ಕಲ್ಲನ್ನು ಭುಜದ ಮೇಲೆ ಹೊತ್ತುಕೊಂಡು ಬನ್ನಿರಿ.</verse>
				<verse number="6">ಏಕೆಂದರೆ ಇದು ನಿಮ್ಮ ಮಧ್ಯದಲ್ಲಿ ಗುರುತಾಗಿರಬೇಕು. ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು, ‘ಈ ಕಲ್ಲುಗಳೇನು?’ ಎಂದು ಕೇಳುವಾಗ,</verse>
				<verse number="7">ನೀವು ಅವರಿಗೆ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಯೊರ್ದನ್ ನದಿಯ ನೀರು ವಿಭಾಗವಾಯಿತು. ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿಯನ್ನು ದಾಟುವಾಗ, ಯೊರ್ದನ್ ನದಿಯ ನೀರು ನಿಂತುಹೋಯಿತು. ಈ ಕಲ್ಲುಗಳು ಇಸ್ರಾಯೇಲರಿಗೆ ಎಂದೆಂದಿಗೂ ಜ್ಞಾಪಕಾರ್ಥವಾದ ಗುರುತು,’ ಎಂದು ಉತ್ತರಕೊಡಬೇಕು,” ಎಂದನು.</verse>
				<verse number="8">ಆಗ ಇಸ್ರಾಯೇಲರು ಯೆಹೋಶುವನು ಆಜ್ಞಾಪಿಸಿದ ಹಾಗೆ ಮಾಡಿದರು. ಯೆಹೋವ ದೇವರು ಯೆಹೋಶುವನಿಗೆ ಹೇಳಿದ ಪ್ರಕಾರ ಇಸ್ರಾಯೇಲರ ಗೋತ್ರಗಳ ಲೆಕ್ಕಕ್ಕೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ಯೊರ್ದನ್ ನದಿಯ ಮಧ್ಯದಿಂದ ತೆಗೆದುಕೊಂಡು, ಅವುಗಳನ್ನು ತಮ್ಮ ಸಂಗಡ ತಂದು ತಾವು ಇಳಿದುಕೊಂಡ ಸ್ಥಳದಲ್ಲಿ ಅವುಗಳನ್ನು ಇಟ್ಟರು.</verse>
				<verse number="9">ಯೆಹೋಶುವನು ಯೊರ್ದನ್ ನದಿ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರ ಕಾಲುಗಳು ಇಟ್ಟ ಸ್ಥಳದಲ್ಲಿ ಹನ್ನೆರಡು ಕಲ್ಲುಗಳನ್ನು ನಿಲ್ಲಿಸಿದನು. ಅವು ಈ ದಿನದವರೆಗೂ ಅಲ್ಲಿಯೇ ಇವೆ.</verse>
				<verse number="10">ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದ ಪ್ರಕಾರ, ಯೆಹೋವ ದೇವರು ಆಜ್ಞಾಪಿಸಿದ್ದೆಲ್ಲಾ ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನ್ ನದಿ ನಡುವೆಯೇ ನಿಂತರು. ಜನರು ತ್ವರೆಯಾಗಿ ಆಚೆಗೆ ದಾಟಿಹೋದರು.</verse>
				<verse number="11">ಜನರೆಲ್ಲರೂ ಆಚೆಗೆ ದಾಟಿದ ಮೇಲೆ ಯೆಹೋವ ದೇವರ ಮಂಜೂಷವೂ ಯಾಜಕರೂ ಜನರ ಎದುರಿನಲ್ಲಿ ದಾಟಿದರು.</verse>
				<verse number="12">ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಯ ಅರ್ಧ ಗೋತ್ರದವರು ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಮಿಕ್ಕ ಇಸ್ರಾಯೇಲರಿಗಿಂತ ಮುಂದಾಗಿ ಹಾದುಹೋದರು.</verse>
				<verse number="13">ಹೆಚ್ಚು ಕಡಿಮೆ ನಾಲ್ವತ್ತು ಸಾವಿರ ಜನರು ಯುದ್ಧಕ್ಕೆ ಸಿದ್ಧರಾಗಿ ಯೆಹೋವ ದೇವರ ಮುಂದೆ ಯುದ್ಧಮಾಡುವುದಕ್ಕೆ ಯೆರಿಕೋವಿನ ಬಯಲುಗಳಿಗೆ ಹಾದುಬಂದರು.</verse>
				<verse number="14">ಆ ದಿನದಲ್ಲಿ ಯೆಹೋವ ದೇವರು ಯೆಹೋಶುವನನ್ನು ಇಸ್ರಾಯೇಲರೆಲ್ಲರ ಮುಂದೆ ಘನಪಡಿಸಿದರು. ಅವರು ಮೋಶೆಯನ್ನು ಗೌರವಿಸಿದ ಹಾಗೆಯೇ, ಅವನಿಗೂ ಅವನು ಬದುಕಿದ ದಿನಗಳಲ್ಲೆಲ್ಲಾ ಗೌರವ ಕೊಟ್ಟರು.</verse>
				<verse number="15">ಯೆಹೋವ ದೇವರು ಯೆಹೋಶುವನ ಸಂಗಡ ಮಾತನಾಡಿ,</verse>
				<verse number="16">“ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರಿಗೆ ಯೊರ್ದನಿನಿಂದ ಮೇಲೆ ಬರಬೇಕೆಂದು ಆಜ್ಞಾಪಿಸು,” ಎಂದು ಹೇಳಿದರು.</verse>
				<verse number="17">ಆಗ ಯೆಹೋಶುವನು ಯಾಜಕರಿಗೆ, “ಯೊರ್ದನಿನಿಂದ ಮೇಲಕ್ಕೆ ಬನ್ನಿರಿ,” ಎಂದು ಆಜ್ಞಾಪಿಸಿದನು.</verse>
				<verse number="18">ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ಯೊರ್ದನ್ ನದಿ ಮಧ್ಯದಲ್ಲಿಂದ ಏರಿ, ತಮ್ಮ ಅಂಗಾಲುಗಳನ್ನು ಒಣನೆಲದ ಮೇಲೆ ಇಟ್ಟಕೂಡಲೇ ನೀರು ಮುಂಚಿನಂತೆ ಬಂದು ಯೊರ್ದನ್ ನದಿಯ ದಡ ತುಂಬಿ ಹರಿಯಿತು.</verse>
				<verse number="19">ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಯೊರ್ದನಿನಿಂದ ಹೊರಟು, ಯೆರಿಕೋವಿನ ಪೂರ್ವದಿಕ್ಕಿನ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದುಕೊಂಡರು.</verse>
				<verse number="20">ಅವರು ಯೊರ್ದನಿನಿಂದ ತೆಗೆದುಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.</verse>
				<verse number="21">ಅವನು ಇಸ್ರಾಯೇಲರಿಗೆ, “ನಿಮ್ಮ ಮಕ್ಕಳು, ‘ಈ ಕಲ್ಲುಗಳು ಏನು?’ ಎಂದು ಮುಂದಿನ ಕಾಲದಲ್ಲಿ ತಮ್ಮ ತಂದೆಗಳನ್ನು ಕೇಳುವಾಗ,</verse>
				<verse number="22">ನೀವು ಅವರಿಗೆ, ‘ಇಸ್ರಾಯೇಲರು ಒಣನೆಲದಲ್ಲಿ ಈ ಯೊರ್ದನ್ ನದಿಯನ್ನು ದಾಟಿ ಬಂದರು.</verse>
				<verse number="23">ನೀವು ಯೊರ್ದನ್ ನದಿ ನೀರನ್ನು ದಾಟಿ ಬರುವವರೆಗೂ, ನಿಮ್ಮ ದೇವರಾದ ಯೆಹೋವ ದೇವರು ಆ ನದಿಯ ನೀರನ್ನು ಒಣಗಿ ಹೋಗುವಂತೆ ಮಾಡಿದರು. ಕೆಂಪು ಸಮುದ್ರವನ್ನು ನಾವು ದಾಟುವವರೆಗೂ ನಮ್ಮ ಮುಂದೆ ಬತ್ತಿಸಿದಂತೆ, ಯೊರ್ದನ್ ನದಿ ನೀರನ್ನೂ ಬತ್ತಿಸಿದರು.</verse>
				<verse number="24">ಭೂಮಿಯ ಜನರೆಲ್ಲಾ ಯೆಹೋವ ದೇವರ ಹಸ್ತವು ಬಲವುಳ್ಳದ್ದೆಂದು ತಿಳಿಯುವಂತೆಯೂ ನೀವು ನಿರಂತರವೂ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡುವಂತೆಯೂ ದೇವರಾದ ಯೆಹೋವ ದೇವರು ಹೀಗೆ ಮಾಡಿದರು,’ ಎಂದು ನೀವು ಹೇಳಬೇಕು,” ಎಂದನು.</verse>
			</chapter>
			<chapter number="5">
				<verse number="1">ಇದಾದ ಮೇಲೆ ಯೆಹೋವ ದೇವರು ಇಸ್ರಾಯೇಲರು ದಾಟಿಹೋಗುವವರೆಗೆ ಅವರ ಮುಂದೆ ಯೊರ್ದನ್ ನದಿಯನ್ನು ಒಣಗಿ ಹೋಗುವಂತೆ ಮಾಡಿದ್ದನ್ನು ಯೊರ್ದನ್ ನದಿ ಪಶ್ಚಿಮದ ಆಚೆದಡದಲ್ಲಿ ವಾಸಿಸಿದ್ದ ಅಮೋರಿಯರ ಸಕಲ ಅರಸರು ಮತ್ತು ಸಮುದ್ರದ ಆಚೆಯಲ್ಲಿ ವಾಸಿಸಿದ್ದ ಕಾನಾನ್ಯರ ಸಕಲ ಅರಸರು ಕೇಳಿದಾಗ ಅವರ ಹೃದಯವು ಕುಂದಿಹೋಯಿತು. ಇಸ್ರಾಯೇಲರ ನಿಮಿತ್ತವಾಗಿ ಅವರಿಗೆ ಪ್ರಾಣಹೋದಂತೆ ಆಯಿತು.</verse>
				<verse number="2">ಆ ಕಾಲದಲ್ಲಿ ಯೆಹೋವ ದೇವರು ಯೆಹೋಶುವನಿಗೆ, “ನೀನು ಗಟ್ಟಿಯಾದ ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಪುನಃ ಇಸ್ರಾಯೇಲರಿಗೆ ಸುನ್ನತಿ ಮಾಡು,” ಎಂದರು.</verse>
				<verse number="3">ಆಗ ಯೆಹೋಶುವನು ತಾನು ಗಟ್ಟಿಯಾದ ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಇಸ್ರಾಯೇಲರಿಗೆ ಗಿಬೆಯಾತ್ ಹಾರಲೋತ್ ಎಂಬ ಸ್ಥಳದಲ್ಲಿ ಸುನ್ನತಿ ಮಾಡಿದನು.</verse>
				<verse number="4">ಯೆಹೋಶುವನು ಸುನ್ನತಿ ಮಾಡಿದ ಕಾರಣವೇನೆಂದರೆ: ಈಜಿಪ್ಟಿನಿಂದ ಹೊರಟ ಗಂಡಸರಲ್ಲಿ ಯುದ್ಧಮಾಡುವ ಸೈನ್ಯದವರೆಲ್ಲರೂ ಮರುಭೂಮಿಯ ಮಾರ್ಗದಲ್ಲಿ ಸತ್ತುಹೋದರು.</verse>
				<verse number="5">ಈಜಿಪ್ಟಿನಿಂದ ಹೊರಟ ಗಂಡಸರೆಲ್ಲರಿಗೂ ಸುನ್ನತಿ ಆಗಿತ್ತು. ಆದರೆ ಈಜಿಪ್ಟಿನಿಂದ ಹೊರಟಾಗ ಮರುಭೂಮಿಯೊಳಗೆ ಮಾರ್ಗದಲ್ಲಿ ಹುಟ್ಟಿದ ಗಂಡುಮಕ್ಕಳಿಗೆ ಸುನ್ನತಿ ಆಗಿರಲಿಲ್ಲ.</verse>
				<verse number="6">ಈಜಿಪ್ಟಿನಿಂದ ಹೊರಟ ಇಸ್ರಾಯೇಲರು ಯೆಹೋವ ದೇವರ ಸ್ವರಕ್ಕೆ ವಿಧೇಯರಾಗದಿದ್ದರಿಂದ ಅವರು, ತಮ್ಮ ಯುದ್ಧವೀರರೆಲ್ಲಾ ನಾಶವಾಗುವ ತನಕ ನಾಲ್ವತ್ತು ವರ್ಷಗಳವರೆಗೆ ಮರುಭೂಮಿಯಲ್ಲಿ ಅಲೆದಾಡುತ್ತಿದ್ದರು. ಏಕೆಂದರೆ ಯೆಹೋವ ದೇವರು ಅವರ ತಂದೆಗಳಿಗೆ ವಾಗ್ದಾನಮಾಡಿದ್ದ, ಹಾಲು ಜೇನು ಹರಿಯುವ ದೇಶವನ್ನು ಅವರು ಕಾಣುವುದಿಲ್ಲ ಎಂದು ಯೆಹೋವ ದೇವರು ಅವರಿಗೆ ಆಣೆಯಿಟ್ಟಿದ್ದರು.</verse>
				<verse number="7">ಅವರಿಗೆ ಹುಟ್ಟಿದ ಅವರ ಮಕ್ಕಳಿಗೆ ಯೆಹೋಶುವನು ಸುನ್ನತಿ ಮಾಡಿಸಿದನು. ಅವರಿಗೆ ಮಾರ್ಗದಲ್ಲಿ ಸುನ್ನತಿ ಮಾಡದೆ ಇದ್ದುದರಿಂದ ಅವರು ಸುನ್ನತಿ ಇಲ್ಲದವರಾಗಿದ್ದರು.</verse>
				<verse number="8">ಜನರೆಲ್ಲರೂ ಸುನ್ನತಿ ಮಾಡಿಸಿಕೊಂಡ ತರುವಾಯ ಅವರು ವಾಸಿಯಾಗುವವರೆಗೂ ಪಾಳೆಯದೊಳಗೆ ತಮ್ಮ ತಮ್ಮ ಸ್ಥಳಗಳಲ್ಲಿ ಇದ್ದರು.</verse>
				<verse number="9">ಆಗ ಯೆಹೋವ ದೇವರು ಯೆಹೋಶುವನಿಗೆ, “ಈ ದಿನ ಈಜಿಪ್ಟಿನ ನಿಂದೆಯನ್ನು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ,” ಎಂದರು. ಆದ್ದರಿಂದ ಆ ಸ್ಥಳವು ಇಂದಿನವರೆಗೂ ಗಿಲ್ಗಾಲ್ ಎಂದು ಕರೆಯಲಾಗಿದೆ.</verse>
				<verse number="10">ಇಸ್ರಾಯೇಲರು ಗಿಲ್ಗಾಲಿನಲ್ಲಿ ಇಳಿದುಕೊಂಡು ತಿಂಗಳಿನ ಹದಿನಾಲ್ಕನೆಯ ದಿವಸ ಸಂಜೆಯಲ್ಲಿ ಯೆರಿಕೋವಿನ ಬಯಲುಗಳಲ್ಲಿ ಪಸ್ಕವನ್ನು ಆಚರಿಸಿದರು.</verse>
				<verse number="11">ಪಸ್ಕದ ಮರುದಿವಸ ಅವರು ಆ ದೇಶದ ಬೆಳೆಯನ್ನು ಅಂದರೆ ಹುಳಿಯಿಲ್ಲದ ರೊಟ್ಟಿಗಳನ್ನೂ ಹುರಿದ ಧಾನ್ಯಗಳನ್ನೂ ತಿಂದರು.</verse>
				<verse number="12">ಅವರು ಆ ದೇಶದ ಧಾನ್ಯವನ್ನು ತಿಂದ ಮರುದಿವಸದಲ್ಲೇ ಮನ್ನವು ನಿಂತುಹೋಯಿತು. ಇಸ್ರಾಯೇಲರಿಗೆ ಮನ್ನ ಮತ್ತೆ ಸಿಕ್ಕಲಿಲ್ಲ. ಅವರು ಆ ವರುಷದಲ್ಲಿ ಕಾನಾನ್ ದೇಶದ ಫಲವನ್ನು ತಿಂದರು.</verse>
				<verse number="13">ಇದಾದ ಮೇಲೆ ಯೆಹೋಶುವನು ಯೆರಿಕೋವಿನ ಬಳಿಯಲ್ಲಿ ಇದ್ದಾಗ, ಒಮ್ಮೆ ಕಣ್ಣೆತ್ತಿ ನೋಡಿದನು. ಆಗ ಒಬ್ಬ ಮನುಷ್ಯನು ಅವನಿಗೆದುರಾಗಿ ನಿಂತಿದ್ದನು. ಆತನ ಕೈಯಲ್ಲಿ ಹಿರಿದ ಖಡ್ಗ ಇರುವುದನ್ನು ಕಂಡನು. ಯೆಹೋಶುವನು ಆತನ ಬಳಿಗೆ ಹೋಗಿ ಆತನಿಗೆ, “ನೀವು ನಮ್ಮವರೋ ಅಥವಾ ಶತ್ರು ಕಡೆಯವರೋ?” ಎಂದು ಕೇಳಿದನು.</verse>
				<verse number="14">ಅದಕ್ಕೆ ಆತನು, “ನಾನು ಅಂಥವನಲ್ಲ, ಯೆಹೋವ ದೇವರ ಸೈನ್ಯದ ಅಧಿಪತಿಯಾಗಿ ಈಗ ನಾನು ಬಂದಿದ್ದೇನೆ,” ಎಂದನು. ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ, ಆತನಿಗೆ, “ನನ್ನ ಒಡೆಯಾ, ತಮ್ಮ ಸೇವಕನಿಗೆ ಹೇಳಬೇಕಾಗಿರುವ ಸಂದೇಶವೇನು?” ಎಂದನು.</verse>
				<verse number="15">ಅದಕ್ಕೆ ಯೆಹೋವ ದೇವರ ಸೈನ್ಯದ ಅಧಿಪತಿಯು ಯೆಹೋಶುವನಿಗೆ, “ನಿನ್ನ ಕೆರಗಳನ್ನು ನಿನ್ನ ಕಾಲುಗಳಿಂದ ತೆಗೆದಿಡು. ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು,” ಎಂದನು. ಹಾಗೆಯೇ ಯೆಹೋಶುವನು ಮಾಡಿದನು.</verse>
			</chapter>
			<chapter number="6">
				<verse number="1">ಆಗ ಯೆರಿಕೋವಿನ ಜನರು ಇಸ್ರಾಯೇಲರ ನಿಮಿತ್ತವಾಗಿ, ಒಬ್ಬರೂ ಹೊರಗೆ ಬಾರದ ಹಾಗೆಯೂ ಒಳಗೆ ಹೋಗದ ಹಾಗೆಯೂ ಯೆರಿಕೋ ಪಟ್ಟಣದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿದರು.</verse>
				<verse number="2">ಆಗ ಯೆಹೋವ ದೇವರು ಯೆಹೋಶುವನಿಗೆ, “ನೋಡು, ಯೆರಿಕೋವನ್ನೂ ಅದರ ಅರಸನನ್ನೂ ಯುದ್ಧ ವೀರರನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.</verse>
				<verse number="3">ಯುದ್ಧ ಸನ್ನದ್ಧರಾದ ನೀವೆಲ್ಲರೂ ಪಟ್ಟಣವನ್ನು ಒಂದು ಸಾರಿ ಸುತ್ತಬೇಕು. ಈ ಪ್ರಕಾರ ಆರು ದಿವಸ ಮಾಡಬೇಕು.</verse>
				<verse number="4">ಏಳುಮಂದಿ ಯಾಜಕರು ಹೊತ್ತುಕೊಂಡಿದ್ದ ಮಂಜೂಷದ ಮುಂದೆ ಟಗರುಗಳ ಏಳು ಕೊಂಬುಗಳ ತುತೂರಿಗಳನ್ನು ಹಿಡಿದುಕೊಂಡು ಹೋಗಬೇಕು. ಆದರೆ ಅವರು ಏಳನೆಯ ದಿವಸ ಪಟ್ಟಣವನ್ನು ಏಳು ಸಾರಿ ಸುತ್ತಿ ಬರಬೇಕು. ಯಾಜಕರು ತುತೂರಿಗಳನ್ನು ಊದಬೇಕು.</verse>
				<verse number="5">ಅವರು ಟಗರು ಕೊಂಬುಗಳ ತುತೂರಿಗಳಿಂದ ದೀರ್ಘಧ್ವನಿಗೈಯುವಾಗ, ಆ ತುತೂರಿಯ ಧ್ವನಿಯನ್ನು ಕೇಳುವ ಜನರೆಲ್ಲರೂ ಮಹಾ ರಭಸದಿಂದ ಆರ್ಭಟಿಸಬೇಕು. ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದುಹೋಗುವುದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಒಳಗೆ ನುಗ್ಗಿಹೋಗಬಹುದು,” ಎಂದು ಹೇಳಿದರು.</verse>
				<verse number="6">ಆದ್ದರಿಂದ ನೂನನ ಮಗನಾದ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಎತ್ತಿಕೊಳ್ಳಿರಿ. ಏಳುಮಂದಿ ಯಾಜಕರು ಏಳು ಟಗರು ಕೊಂಬುಗಳ ತುತೂರಿಗಳೊಂದಿಗೆ ಯೆಹೋವ ದೇವರ ಮಂಜೂಷದ ಮುಂದೆ ಹೋಗಲಿ,” ಎಂದನು.</verse>
				<verse number="7">ಜನರಿಗೆ, “ನೀವು ಹಾದು ಹೋಗಿ ಪಟ್ಟಣವನ್ನು ಸುತ್ತಿರಿ. ಯುದ್ಧಸನ್ನದ್ದರು ಯೆಹೋವ ದೇವರ ಮಂಜೂಷದ ಮುಂದೆ ಹೋಗಲಿ,” ಎಂದನು.</verse>
				<verse number="8">ಯೆಹೋಶುವನು ಜನರ ಸಂಗಡ ಮಾತನಾಡಿದ ತರುವಾಯ, ಏಳು ಟಗರು ಕೊಂಬುಗಳ ತುತೂರಿಗಳನ್ನು ಹಿಡಿದುಕೊಂಡ ಏಳುಮಂದಿ ಯಾಜಕರು ತುತೂರಿಗಳನ್ನು ಊದುತ್ತಾ ಯೆಹೋವ ದೇವರ ಮುಂದೆ ನಡೆದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅವರನ್ನು ಹಿಂಬಾಲಿಸಿತು.</verse>
				<verse number="9">ಹೀಗೆ ಯುದ್ಧ ಸನ್ನದ್ಧರಾದ ಜನರು ತುತೂರಿಗಳನ್ನು ಊದುವ ಯಾಜಕರ ಮುಂದೆ ಹೋದರು. ಯಾಜಕರು ತುತೂರಿಯನ್ನು ಊದುತ್ತಿರುವಾಗ ಹಿಂದಿನ ಸೈನ್ಯವು ಮಂಜೂಷದ ಹಿಂದೆ ನಡೆದು ಬಂತು.</verse>
				<verse number="10">ಯೆಹೋಶುವನು ಜನರಿಗೆ, “ನೀವು ಈಗ ಆರ್ಭಟಿಸಬಾರದು. ನಿಮ್ಮ ಶಬ್ದವು ಕೇಳಿಸಲೂಬಾರದು. ನಿಮ್ಮ ಬಾಯಿಂದ ಯಾವ ಮಾತು ಹೊರಡಲೂಬಾರದು, ನಾನು ಆರ್ಭಟಿಸಿರೆಂದು ಹೇಳುವ ದಿನದಲ್ಲಿ ಮಾತ್ರ ಆರ್ಭಟಿಸಬೇಕು,” ಎಂದು ಆಜ್ಞಾಪಿಸಿದನು.</verse>
				<verse number="11">ಹೀಗೆಯೇ ಯೆಹೋವ ದೇವರ ಮಂಜೂಷವು ಪಟ್ಟಣವನ್ನು ಒಂದು ಸಾರಿ ಸುತ್ತಿದ ಮೇಲೆ ಅವರು ಪಾಳೆಯಕ್ಕೆ ಬಂದು ಅಲ್ಲಿ ರಾತ್ರಿಯನ್ನು ಕಳೆದರು.</verse>
				<verse number="12">ಯೆಹೋಶುವನು ಮರುದಿನ ಬೆಳಿಗ್ಗೆ ಎದ್ದನು. ಯಾಜಕರು ಯೆಹೋವ ದೇವರ ಮಂಜೂಷವನ್ನು ತೆಗೆದುಕೊಂಡರು.</verse>
				<verse number="13">ಟಗರಿನ ಕೊಂಬುಗಳ ಏಳು ತುತೂರಿಗಳನ್ನು ಊದುತ್ತಾ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ನಡೆಯುತ್ತಾ ಹೋದರು. ಯುದ್ಧಕ್ಕೆ ಸಿದ್ಧವಾದ ಜನರು ಅವರ ಮುಂದೆ ಹೋದರು. ಆದರೆ ಹಿಂದಿನ ಸೈನ್ಯದವರು ಯೆಹೋವ ದೇವರ ಮಂಜೂಷದ ಹಿಂದೆ ನಡೆದರು. ಯಾಜಕರು ತುತೂರಿಗಳನ್ನು ಊದುತ್ತಾ ಹೊರಟರು.</verse>
				<verse number="14">ಹೀಗೆ ಎರಡನೆಯ ದಿನದಲ್ಲಿ ಅವರು ಪಟ್ಟಣವನ್ನು ಒಂದು ಸಾರಿ ಸುತ್ತಿಬಂದು ಪಾಳೆಯಕ್ಕೆ ಹಿಂದಿರುಗಿದರು. ಹೀಗೆಯೇ ಆರು ದಿನ ಮಾಡಿದರು.</verse>
				<verse number="15">ಆದರೆ ಏಳನೆಯ ದಿನ ಸೂರ್ಯೋದಯವಾಗುವಾಗ, ಅವರು ಎದ್ದು ಪಟ್ಟಣವನ್ನು ಅದೇ ರೀತಿಯಾಗಿ ಏಳು ಸಾರಿ ಸುತ್ತಿಬಂದರು. ಆ ದಿನದಲ್ಲಿ ಮಾತ್ರವೇ ಪಟ್ಟಣವನ್ನು ಏಳು ಸಾರಿ ಸುತ್ತಿಬಂದರು.</verse>
				<verse number="16">ಏಳನೆಯ ಸಾರಿ ಯಾಜಕರು ತುತೂರಿಗಳನ್ನು ಊದುವಾಗ, ಯೆಹೋಶುವನು ಜನರಿಗೆ, “ಆರ್ಭಟಿಸಿರಿ! ಯೆಹೋವ ದೇವರು ನಿಮಗೆ ಈ ಪಟ್ಟಣವನ್ನು ಕೊಟ್ಟಿದ್ದಾರೆ.</verse>
				<verse number="17">ಆದರೂ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರಿಗೆ ಅರ್ಪಿತವಾದವುಗಳು. ರಾಹಾಬಳೆಂಬ ವೇಶ್ಯೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಏಕೆಂದರೆ ನಾವು ಕಳುಹಿಸಿದ ಗೂಢಚಾರರನ್ನು ಆಕೆಯು ಬಚ್ಚಿಟ್ಟಿದ್ದಳು.</verse>
				<verse number="18">ಆದರೆ ಅರ್ಪಿತವಾದವುಗಳನ್ನು ನೀವು ಮುಟ್ಟಬೇಡಿರಿ. ಹಾಗೆ ಅವುಗಳನ್ನು ತೆಗೆದುಕೊಂಡು ನಿಮಗೆ ನಾಶನವನ್ನು ತಂದುಕೊಳ್ಳಬೇಡಿರಿ. ಇಸ್ರಾಯೇಲಿನ ಪಾಳೆಯವೇ ಶಾಪಕ್ಕೆ ಈಡು ಮಾಡಿ, ತೊಂದರೆ ಪಡಿಸದಂತೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರಿ.</verse>
				<verse number="19">ಎಲ್ಲಾ ಬೆಳ್ಳಿಬಂಗಾರ, ಕಂಚು, ಕಬ್ಬಿಣ ಪಾತ್ರೆಗಳು ಯೆಹೋವ ದೇವರಿಗೆ ಅರ್ಪಿತವಾಗಿರಬೇಕು. ಅವು ಯೆಹೋವ ದೇವರ ಭಂಡಾರಕ್ಕೆ ಸೇರಿರಬೇಕು,” ಎಂದು ಆಜ್ಞಾಪಿಸಿದನು.</verse>
				<verse number="20">ಕೂಡಲೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತೂರಿಯ ಶಬ್ದವನ್ನು ಜನರು ಕೇಳಿ ಮಹಾಧ್ವನಿಯಿಂದ ಆರ್ಭಟಿಸಿದಾಗ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು. ಹೀಗೆ ಜನರಲ್ಲಿ ಪ್ರತಿಯೊಬ್ಬನು ಮುಂದೆ ನೇರವಾಗಿ ಒಳಗೆ ನುಗ್ಗಿದರು. ಆಗ ಪಟ್ಟಣವು ಅವರಿಗೆ ಸ್ವಾಧೀನವಾಯಿತು.</verse>
				<verse number="21">ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀಪುರುಷರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆಗಳನ್ನೂ ಖಡ್ಗದಿಂದ ಸಂಪೂರ್ಣವಾಗಿ ನಾಶಮಾಡಿದರು.</verse>
				<verse number="22">ಆ ನಾಡನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಇಬ್ಬರು ಮನುಷ್ಯರಿಗೆ ಯೆಹೋಶುವನು, “ನೀವು ಆ ವೇಶ್ಯೆಯ ಮನೆಗೆ ಹೋಗಿ, ಅವಳನ್ನೂ ಅವಳಿಗೆ ಇರುವ ಸಮಸ್ತವನ್ನೂ ನೀವು ಅವಳಿಗೆ ಆಣೆ ಇಟ್ಟ ಹಾಗೆ ಅಲ್ಲಿಂದ ಹೊರಗೆ ತೆಗೆದುಕೊಂಡು ಬನ್ನಿರಿ,” ಎಂದನು.</verse>
				<verse number="23">ಅದರಂತೆ ಆ ಯೌವನಸ್ಥರು ಒಳಗೆ ಹೋಗಿ, ರಾಹಾಬಳನ್ನೂ ಅವಳ ತಂದೆಯನ್ನೂ ಅವಳ ತಾಯಿಯನ್ನೂ ಅವಳ ಸಹೋದರರನ್ನೂ ಅವಳಿಗಿದ್ದ ಸಮಸ್ತವನ್ನೂ ಅವಳ ಗೋತ್ರದ ಎಲ್ಲಾ ಸಂಬಂಧಿಕರನ್ನೂ ಹೊರಗೆ ಕರೆತಂದು ಇಸ್ರಾಯೇಲ್ ಪಾಳೆಯದ ಹೊರಗೆ ಅವರನ್ನು ಇರಿಸಿದರು.</verse>
				<verse number="24">ಆದರೆ ಪಟ್ಟಣವನ್ನೂ ಅದರಲ್ಲಿರುವ ಸಮಸ್ತವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಬೆಳ್ಳಿಬಂಗಾರವನ್ನೂ ಕಂಚು ಕಬ್ಬಿಣ ಪಾತ್ರೆಗಳನ್ನು ಮಾತ್ರ ಯೆಹೋವ ದೇವರ ಮನೆಯ ಭಂಡಾರದಲ್ಲಿ ಇಟ್ಟರು.</verse>
				<verse number="25">ಆದರೆ ಯೆಹೋಶುವನು ವೇಶ್ಯೆಯಾದ ರಾಹಾಬಳನ್ನೂ, ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದ ಸಮಸ್ತವನ್ನೂ ತಪ್ಪಿಸಿ ಉಳಿಸಿದನು. ಅವಳು ಈ ದಿವಸದವರೆಗೂ ಇಸ್ರಾಯೇಲರಲ್ಲಿ ವಾಸವಾಗಿದ್ದಾಳೆ. ಏಕೆಂದರೆ ಯೆರಿಕೋವನ್ನು ಸಂಚರಿಸಿ ನೋಡಲು, ಯೆಹೋಶುವನು ಕಳುಹಿಸಿದ ಗೂಢಚಾರರನ್ನು ಅವಳು ಬಚ್ಚಿಟ್ಟಿದ್ದಳು.</verse>
				<verse number="26">ಆ ಕಾಲದಲ್ಲಿ ಯೆಹೋಶುವನು ಅವರಿಗೆ ಆಣೆ ಇಟ್ಟು ಹೇಳಿದ್ದೇನೆಂದರೆ, “ಯೆರಿಕೋವೆಂಬ ಈ ನಗರವನ್ನು ಮತ್ತೆ ಕಟ್ಟುವವನು, ಯೆಹೋವ ದೇವರ ದೃಷ್ಟಿಯಲ್ಲಿ ಶಾಪಗ್ರಸ್ತನಾಗುವನು. “ಅದರ ಅಸ್ತಿವಾರವನ್ನು ಹಾಕುವವನು, ಅವನು ತನ್ನ ಚೊಚ್ಚಲು ಮಗನನ್ನು ಕಳೆದುಕೊಳ್ಳುವನು. ಪಟ್ಟಣದ ಬಾಗಿಲುಗಳನ್ನಿಡುವಾಗ ತನ್ನ ಕಿರಿ ಮಗನನ್ನು ಕಳೆದುಕೊಳ್ಳುವನು.”</verse>
				<verse number="27">ಯೆಹೋವ ದೇವರು ಯೆಹೋಶುವನ ಸಂಗಡ ಇದ್ದರು. ಅವನ ಕೀರ್ತಿ ದೇಶದಲ್ಲೆಲ್ಲಾ ಹರಡಿತು.</verse>
			</chapter>
			<chapter number="7">
				<verse number="1">ಆದರೆ ಇಸ್ರಾಯೇಲರು ಅರ್ಪಿತವಾದ ವಸ್ತುಗಳ ವಿಷಯದಲ್ಲಿ ಅಪನಂಬಿಕೆಯಿಂದ ನಡೆದುಕೊಂಡರು. ಯೆಹೂದ ಗೋತ್ರದ ಜೆರಹನ ಮೊಮ್ಮಗನೂ, ಜಿಮ್ರಿಯ ಮಗನೂ ಆದ ಕರ್ಮೀಯ ಮಗನಾದ ಆಕಾನನು ಅರ್ಪಿತವಾದ ವಸ್ತುಗಳಲ್ಲಿ ಕೆಲವನ್ನು ಕದ್ದುಕೊಂಡನು. ಇದರಿಂದ ಇಸ್ರಾಯೇಲರ ಮೇಲೆ ಯೆಹೋವ ದೇವರ ಕೋಪವು ಉರಿಯಿತು.</verse>
				<verse number="2">ಆಗ ಯೆಹೋಶುವನು ಕೆಲವರನ್ನು ಕರೆದು, “ನೀವು ದೇಶವನ್ನು ಸಂಚರಿಸಿ ಸುತ್ತಿ ನೋಡಿ ಬನ್ನಿರಿ,” ಎಂದು ಹೇಳಿ, ಯೆರಿಕೋವಿನಿಂದ ಜನರನ್ನು ಬೇತೇಲಿನ ಪೂರ್ವದಕಡೆ ಬೇತಾವೆನಿನ ಬಳಿಯಲ್ಲಿರುವ ಆಯಿ ಎಂಬ ಪಟ್ಟಣಕ್ಕೆ ಕಳುಹಿಸಿದನು. ಆಗ ಅವರು ಹೋಗಿ ಆಯಿ ಎಂಬ ಪಟ್ಟಣವನ್ನು ರಹಸ್ಯವಾಗಿ ನೋಡಿ ಬಂದರು.</verse>
				<verse number="3">ಯೆಹೋಶುವನ ಬಳಿಗೆ ತಿರುಗಿಬಂದು ಅವನಿಗೆ, “ಜನರೆಲ್ಲರೂ ಹೋಗುವ ಅವಶ್ಯಕತೆ ಇಲ್ಲ, ಆಯಿ ಎಂಬ ಪಟ್ಟಣವನ್ನು ಹೊಡೆಯುವುದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಹೋದರೆ ಸಾಕು. ಸೈನ್ಯವನ್ನು ಕಳುಹಿಸಿ ದಣಿಸಬೇಡ. ಏಕೆಂದರೆ ಸ್ವಲ್ಪ ಜನರು ಮಾತ್ರ ಅಲ್ಲಿ ಇದ್ದಾರೆ,” ಎಂದರು.</verse>
				<verse number="4">ಆದ್ದರಿಂದ ಜನರಲ್ಲಿ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಅಲ್ಲಿಗೆ ಹೋದರು. ಆದರೆ ಅವರು ಆಯಿ ಎಂಬ ಪಟ್ಟಣದ ಮನುಷ್ಯರನ್ನು ಎದುರಿಸಲಾಗದೆ ಓಡಿಹೋದರು.</verse>
				<verse number="5">ಆಯಿ ಎಂಬ ಪಟ್ಟಣದವರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಪಟ್ಟಣದ ಬಾಗಿಲಿನಿಂದ ಪ್ರಾರಂಭಿಸಿ ಶೆಬಾರಿಮಿನವರೆಗೂ ಅವರನ್ನು ಹಿಂದಟ್ಟಿ, ಅವರನ್ನು ಹೊಡೆದರು. ಆದ್ದರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.</verse>
				<verse number="6">ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡನು. ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಂಜೆಯವರೆಗೆ ಯೆಹೋವ ದೇವರ ಮಂಜೂಷದ ಮುಂದೆ ನೆಲದ ಮೇಲೆ ಬೋರಲು ಬಿದ್ದರು.</verse>
				<verse number="7">ಇದಲ್ಲದೆ ಯೆಹೋಶುವನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ನಮ್ಮನ್ನು ಅಮೋರಿಯರ ಕೈಯಲ್ಲಿ ಒಪ್ಪಿಸಿಕೊಡುವುದಕ್ಕಾಗಿ ನೀವು ಈ ಜನರನ್ನು ಯೊರ್ದನ್ ನದಿ ದಾಟಿಸಿದ್ದು ಏಕೆ? ನಾವು ಯೊರ್ದನ್ ನದಿ ಆಚೆಯಲ್ಲಿ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.</verse>
				<verse number="8">ಯೆಹೋವ ದೇವರೇ, ಈಗ ಇಸ್ರಾಯೇಲರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದರಲ್ಲಾ. ನಾನು ಏನು ಹೇಳಲಿ.</verse>
				<verse number="9">ಕಾನಾನ್ಯರೂ ದೇಶವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದುಬಿಡುವರು, ಆಗ ನಿಮ್ಮ ಮಹತ್ತಾದ ಹೆಸರಿಗೆ ಏನು ಮಾಡುವಿರಿ?” ಎಂದನು.</verse>
				<verse number="10">ಯೆಹೋವ ದೇವರು ಯೆಹೋಶುವನಿಗೆ, “ನೀನು ಎದ್ದೇಳು, ನೀನು ಈ ಪ್ರಕಾರ ಬೋರಲು ಬಿದ್ದಿರುವುದೇನು?</verse>
				<verse number="11">ಇಸ್ರಾಯೇಲರು ಪಾಪಮಾಡಿದ್ದಾರೆ. ನಾನು ತಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಮೀರಿದರು. ಅವರು ಅರ್ಪಿತವಾದದ್ದರಲ್ಲಿ ಕೆಲವೊಂದನ್ನು ಕಳವು ಮಾಡಿ ತೆಗೆದುಕೊಂಡು, ವಂಚನೆಮಾಡಿ ಅದನ್ನು ತಮ್ಮ ಸಲಕರಣೆಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.</verse>
				<verse number="12">ಆದ್ದರಿಂದ ಇಸ್ರಾಯೇಲರು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನು ತೋರಿಸಿದ್ದಾರೆ. ಅದರಿಂದ ಅವರು ನಾಶನಕ್ಕೆ ಪಾತ್ರರಾದರು. ನೀವು ಶಾಪಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ, ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವುದಿಲ್ಲ.</verse>
				<verse number="13">“ನೀನು ಎದ್ದು ಜನರನ್ನು ಶುದ್ಧೀಕರಿಸಿ, ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ, ಏಕೆಂದರೆ, ‘ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು, ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವವರೆಗೂ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರೆ,’ ಎಂದು ಇಸ್ರಾಯೇಲರ ದೇವರಾದ ಯೆಹೋವ ದೇವರು ಹೇಳುತ್ತಾರೆ.</verse>
				<verse number="14">“ ‘ಆದ್ದರಿಂದ ಬೆಳಿಗ್ಗೆ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಯೆಹೋವ ದೇವರು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರವಾಗಿಯೂ ಯೆಹೋವ ದೇವರು ಹಿಡಿಯುವ ಕುಟುಂಬವು ಮನೆಮನೆಯಾಗಿಯೂ ಯೆಹೋವ ದೇವರು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ.</verse>
				<verse number="15">ಆಗ ಶಾಪಕ್ಕೀಡಾದದ್ದನ್ನು ತೆಗೆದುಕೊಂಡವನೆಂದು ಹಿಡಿಯಲಾಗುವನು. ಯೆಹೋವ ದೇವರ ಒಡಂಬಡಿಕೆಯನ್ನು ಮೀರಿ, ಇಸ್ರಾಯೇಲಿನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲಾಗಬೇಕು, ಎಂದು ಅವರಿಗೆ ಹೇಳು,’ ಎಂದರು.”</verse>
				<verse number="16">ಮರುದಿನ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರ ಗೋತ್ರವಾಗಿ ಕರೆದಾಗ, ಯೆಹೂದ ಗೋತ್ರವು ಸಿಕ್ಕಿಕೊಂಡಿತು.</verse>
				<verse number="17">ಅವನು ಯೆಹೂದ ಕುಟುಂಬವನ್ನು ಕರೆದಾಗ, ಜೆರಹನ ಗೋತ್ರ ಸಿಕ್ಕಿಕೊಂಡಿತು. ಜೆರಹನ ಗೋತ್ರವನ್ನು ಕರೆದಾಗ ಜಿಮ್ರಿಯು ಸಿಕ್ಕಿಕೊಂಡಿತು.</verse>
				<verse number="18">ಅವನ ಕುಟುಂಬಗಳು ಕುಟುಂಬಗಳಾಗಿ, ವ್ಯಕ್ತಿಗಳು ವ್ಯಕ್ತಿಗಳಾಗಿ ಬಂದಾಗ, ಜಿಮ್ರಿಯ ಮಗನಾದ ಕರ್ಮೀಯ ಮಗನಾದ ಆಕಾನನೂ ಯೆಹೂದ ಕುಲದವನೂ ಜೆರಹನ ಗೋತ್ರದವನೂ ಸಿಕ್ಕಿದನು.</verse>
				<verse number="19">ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ನೀನು ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಘನಪಡಿಸಿ, ಅವರಿಗೆ ಸ್ತೋತ್ರ ಸಲ್ಲಿಸು. ಏನು ಮಾಡಿದೆಯೋ ಅದನ್ನು ನನಗೆ ತಿಳಿಸು, ನನಗೆ ಮರೆಮಾಡಬೇಡ,” ಎಂದನು.</verse>
				<verse number="20">ಆಕಾನನು ಯೆಹೋಶುವನಿಗೆ, “ನಿಜವಾಗಿ ನಾನು ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಇಂಥಿಂಥವುಗಳನ್ನು ಮಾಡಿದ್ದೇನೆ.</verse>
				<verse number="21">ನಾನು ಕೊಳ್ಳೆಯಲ್ಲಿ ಒಂದು ಶಿನಾರ್ ದೇಶದ ಒಳ್ಳೆಯ ವಸ್ತ್ರವನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಒಂದು ಬಂಗಾರದ ಗಟ್ಟಿಯನ್ನು ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ, ಬೆಳ್ಳಿಯೂ ಅದರ ಕೆಳಗೆ ಇದೆ,” ಎಂದನು.</verse>
				<verse number="22">ಆಗ ಯೆಹೋಶುವನು ದೂತರನ್ನು ಕಳುಹಿಸಿದನು. ಅವರು ಡೇರೆಗಳಿಗೆ ಓಡಿದರು. ಆ ಡೇರೆಯಲ್ಲಿ ಹೂತಿಟ್ಟವುಗಳನ್ನು ತೆಗೆದರು. ಬೆಳ್ಳಿಯು ಅದರ ಕೆಳಗೆ ಮರೆಮಾಡಲಾಗಿತ್ತು.</verse>
				<verse number="23">ಅವರು ಅವುಗಳನ್ನು ಡೇರೆಯ ಮಧ್ಯದಿಂದ ತೆಗೆದುಕೊಂಡು ಯೆಹೋಶುವನ ಬಳಿಗೂ ಸಮಸ್ತ ಇಸ್ರಾಯೇಲರ ಬಳಿಗೂ ತಂದು, ಯೆಹೋವ ದೇವರ ಮುಂದೆ ಇಟ್ಟರು.</verse>
				<verse number="24">ಆಗ ಯೆಹೋಶುವನೂ ಅವನೊಂದಿಗೆ ಇಸ್ರಾಯೇಲರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಪುತ್ರಪುತ್ರಿಯರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ಕಣಿವೆಗೆ ತಂದರು.</verse>
				<verse number="25">ಆಗ ಯೆಹೋಶುವನು ಅವನಿಗೆ, “ನೀನು ನಮ್ಮನ್ನು ಸಂಕಷ್ಟಪಡಿಸಿದ್ದೇನು? ಇಂದು ಯೆಹೋವ ದೇವರು ನಿನ್ನನ್ನು ಸಂಕಷ್ಟಪಡಿಸುವರು,” ಎಂದನು. ಆಗ ಇಸ್ರಾಯೇಲರೆಲ್ಲರೂ ಅವನ ಮೇಲೆ ಕಲ್ಲೆಸೆದರು. ಕಲ್ಲೆಸೆದ ತರುವಾಯ ಉಳಿದವರನ್ನು ಬೆಂಕಿಯಿಂದ ಸುಟ್ಟುಬಿಟ್ಟು,</verse>
				<verse number="26">ಅವರ ಮೇಲೆ ಕಲ್ಲುಕುಪ್ಪೆ ಕೂಡಿಸಿದರು. ಅದು ಈ ದಿನದವರೆಗೂ ಇದೆ. ಆಗ ಯೆಹೋವ ದೇವರು ತಮ್ಮ ಕೋಪದ ಉರಿಯನ್ನು ಬಿಟ್ಟು ತಿರುಗಿದರು. ಆದ್ದರಿಂದ ಆ ಸ್ಥಳವು ಈವರೆಗೂ ಆಕೋರಿನ ಕಣಿವೆ ಎಂದು ಕರೆಯಲಾಗುತ್ತದೆ.</verse>
			</chapter>
			<chapter number="8">
				<verse number="1">ಆಗ ಯೆಹೋವ ದೇವರು ಯೆಹೋಶುವನಿಗೆ, “ಭಯಪಡಬೇಡ, ನಿರುತ್ಸಾಹಗೊಳ್ಳಬೇಡ, ನೀನು ಸಮಸ್ತ ಸೈನ್ಯವನ್ನು ಕೂಡಿಸಿಕೊಂಡು ಎದ್ದು ಆಯಿ ಎಂಬ ಪಟ್ಟಣಕ್ಕೆ ಏರಿ ಹೋಗು. ನೋಡು, ನಾನು ಆಯಿ ಎಂಬ ಪಟ್ಟಣದ ಅರಸನನ್ನೂ ಅವನ ಜನರನ್ನೂ ಅವನ ಪಟ್ಟಣವನ್ನೂ ಅವನ ಸೀಮೆಯನ್ನೂ ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.</verse>
				<verse number="2">ನೀನು ಯೆರಿಕೋವಿಗೂ ಅದರ ಅರಸನಿಗೂ ಯಾವ ಪ್ರಕಾರ ಮಾಡಿದೆಯೋ ಹಾಗೆಯೇ ಆಯಿ ಎಂಬ ಪಟ್ಟಣಕ್ಕೂ ಅದರ ಅರಸನಿಗೂ ಮಾಡಬೇಕು. ಅದರ ಕೊಳ್ಳೆಯನ್ನೂ, ಪಶುಪ್ರಾಣಿಗಳನ್ನು ಮಾತ್ರವೇ ನಿಮಗೋಸ್ಕರ ಇಟ್ಟುಕೊಳ್ಳಿರಿ. ನೀವು ಆ ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಲು ಸ್ಥಳಮಾಡಿಕೊಳ್ಳಿರಿ,” ಎಂದರು.</verse>
				<verse number="3">ಆಗ ಆಯಿ ಎಂಬ ಪಟ್ಟಣಕ್ಕೆ ಏರಿ ಹೋಗಲು ಯೆಹೋಶುವನೂ, ಸಮಸ್ತ ಸೈನಿಕರೂ ಎದ್ದರು. ಆದರೆ ಯೆಹೋಶುವನು ಪರಾಕ್ರಮಶಾಲಿಗಳಾದ ಮೂವತ್ತು ಸಾವಿರ ಜನರನ್ನು ಆಯ್ದುಕೊಂಡು ರಾತ್ರಿಯಲ್ಲಿ ಅವರನ್ನು ಕಳುಹಿಸಿದನು.</verse>
				<verse number="4">ಅವರಿಗೆ ಆಜ್ಞಾಪಿಸಿ, “ಪಟ್ಟಣದ ಹಿಂದೆ ನೀವು ಹೊಂಚಿಕೊಂಡಿರಿ, ಪಟ್ಟಣಕ್ಕೆ ಬಹುದೂರ ಹೋಗಬೇಡಿರಿ. ನೀವೆಲ್ಲರೂ ಸಿದ್ಧವಾಗಿರಿ.</verse>
				<verse number="5">ಆದರೆ ನಾನೂ, ನನ್ನ ಸಂಗಡ ಇರುವ ಜನರೆಲ್ಲರೂ ಪಟ್ಟಣದ ಸಮೀಪಕ್ಕೆ ಸೇರುವೆವು. ಆಗ, ಅವರು ಮುಂಚಿನ ಹಾಗೆಯೇ ನಮಗೆ ವಿರೋಧವಾಗಿ ಪಟ್ಟಣದಿಂದ ಹೊರಟು ಬರುವಾಗ ಅವರ ಮುಂದೆ ನಾವು ಓಡಿ ಹೋಗುವೆವು.</verse>
				<verse number="6">ಆಗ ಅವರು, ‘ಮುಂಚಿನ ಹಾಗೆಯೇ ನಮ್ಮ ಮುಂದೆ ಓಡಿಹೋಗುತ್ತಾರೆ,’ ಎಂದು ಹೇಳಿಕೊಳ್ಳುವರು. ಪಟ್ಟಣದ ಬಳಿಯಿಂದ ದೂರದವರೆಗೂ ಅವರು ಬರುವವರೆಗೆ ನಾವು ಓಡಿ ಹೋಗುತ್ತಲೇ ಇರುವೆವು.</verse>
				<verse number="7">ಆಗ ನೀವು ಹೊಂಚಿಕೊಳ್ಳುವ ಸ್ಥಳದಿಂದ ಎದ್ದು ಬಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿಕೊಡುವರು.</verse>
				<verse number="8">ನೀವು ಪಟ್ಟಣವನ್ನು ಹಿಡಿದ ತರುವಾಯ, ಬೆಂಕಿ ಹಚ್ಚಿ, ಅದನ್ನು ಸುಟ್ಟುಬಿಟ್ಟು, ಯೆಹೋವ ದೇವರ ಆಜ್ಞೆಯ ಪ್ರಕಾರವೇ ಮಾಡಿರಿ. ನಾನು ಇದನ್ನು ನಿಮಗೆ ಆಜ್ಞಾಪಿಸಿದ್ದೇನೆ,” ಎಂದನು.</verse>
				<verse number="9">ಯೆಹೋಶುವನು ಅವರನ್ನು ಕಳುಹಿಸಿದಾಗ ಅವರು ಹೋಗಿ ಹೊಂಚಿಕೊಂಡು ಬೇತೇಲಿಗೂ ಆಯಿ ಎಂಬ ಪಟ್ಟಣಕ್ಕೂ ನಡುವೆ ಆಯಿ ಎಂಬ ಪಟ್ಟಣಕ್ಕೆ ಪಶ್ಚಿಮದ ಕಡೆ ಅಡಗಿಕೊಂಡರು. ಆದರೆ ಯೆಹೋಶುವನು ಆ ರಾತ್ರಿ ಜನರ ಮಧ್ಯದಲ್ಲಿ ಉಳಿದನು.</verse>
				<verse number="10">ಉದಯಕಾಲದಲ್ಲಿ ಯೆಹೋಶುವನು ಎದ್ದು ಸೈನ್ಯವನ್ನು ಲೆಕ್ಕ ಮಾಡಿ, ತಾನೂ ಇಸ್ರಾಯೇಲಿನ ಹಿರಿಯರೂ ಜನರ ಮುಂದೆ ನಡೆದು ಆಯಿ ಎಂಬ ಪಟ್ಟಣಕ್ಕೆ ಏರಿಹೋದರು.</verse>
				<verse number="11">ಅವನ ಸಂಗಡ ಇದ್ದ ಸೈನಿಕರೆಲ್ಲಾ ನಡೆದು ಪಟ್ಟಣದ ಸಮೀಪವಾಗಿ ಬಂದು ಸೇರಿ, ಆಯಿ ಎಂಬ ಪಟ್ಟಣದ ಉತ್ತರ ದಿಕ್ಕಿನಲ್ಲಿ ಪಾಳೆಯಲ್ಲಿ ಇಳಿದುಕೊಂಡರು. ಆದರೆ ಆಯಿ ಎಂಬ ಪಟ್ಟಣಕ್ಕೂ ಅವರಿಗೂ ಮಧ್ಯದಲ್ಲಿ ಒಂದು ಕಣಿವೆ ಇತ್ತು.</verse>
				<verse number="12">ಯೆಹೋಶುವನು ಹೆಚ್ಚು ಕಡಿಮೆ ಐದು ಸಾವಿರ ಜನರನ್ನು ಆಯ್ದುಕೊಂಡು, ಆ ಪಟ್ಟಣದ ಪಶ್ಚಿಮ ಕಡೆಯಲ್ಲಿ ಬೇತೇಲಿಗೂ, ಆಯಿ ಎಂಬ ಪಟ್ಟಣದ ನಡುವೆ ಹೊಂಚಿಹಾಕಿಕೊಂಡಿರಲು ಅವರನ್ನು ಇಟ್ಟನು.</verse>
				<verse number="13">ಪಟ್ಟಣಕ್ಕೆ ಉತ್ತರದಲ್ಲಿರುವ ಸಕಲ ಸೈನ್ಯದ ಜನರನ್ನೂ, ಪಟ್ಟಣಕ್ಕೆ ಪಶ್ಚಿಮ ದಿಕ್ಕಿನಲ್ಲಿ ಹೊಂಚುಗಾರರನ್ನೂ ಇಟ್ಟ ತರುವಾಯ ಯೆಹೋಶುವನು ಆ ರಾತ್ರಿಯಲ್ಲಿ ಕಣಿವೆಯ ಮಧ್ಯಕ್ಕೆ ಹೋದನು.</verse>
				<verse number="14">ಆಯಿ ಎಂಬ ಪಟ್ಟಣದ ಅರಸನು ಇದನ್ನು ಕಂಡಾಗ, ಆ ಪಟ್ಟಣದ ಜನರು ತ್ವರೆಪಟ್ಟು, ಉದಯಕಾಲದಲ್ಲಿ ಎದ್ದು, ನಿಶ್ಚಯಿಸಿದ ವೇಳೆಯಲ್ಲಿ ಆಯಿ ಎಂಬ ಪಟ್ಟಣದ ಅರಸನೂ ಅವನ ಜನರೆಲ್ಲರೂ ಇಸ್ರಾಯೇಲಿಗೆ ಎದುರಾಗಿ ಯುದ್ಧಮಾಡಲು ಬಯಲಿಗೆ ಹೊರಟರು. ಅವನೂ ಅವನ ಜನರೂ ಅರಾಬಾ ಎಂಬ ತಗ್ಗಾದ ಪ್ರದೇಶವು ಕಾಣುವ ಸ್ಥಳಕ್ಕೆ ಬಂದರು. ಆದರೆ ಅವನು ಪಟ್ಟಣದ ಹಿಂದೆ ತನಗೋಸ್ಕರ ಹೊಂಚಿಕೊಂಡಿರುವವರನ್ನು ಅರಿಯದೆ ಇದ್ದನು.</verse>
				<verse number="15">ಅವರ ಮುಂದೆ ಯೆಹೋಶುವನೂ ಇಸ್ರಾಯೇಲರೆಲ್ಲರೂ ಸೋತವರ ಹಾಗೆ ಮರುಭೂಮಿಯ ಮಾರ್ಗವಾಗಿ ಓಡಿಹೋದರು.</verse>
				<verse number="16">ಆಗ ಆಯಿ ಎಂಬ ಪಟ್ಟಣದಲ್ಲಿರುವ ಜನರೆಲ್ಲರನ್ನು ಕರೆದುಕೊಂಡು ಹಿಂದಟ್ಟುವುದಕ್ಕೆ ಕರೆಯಲಾದವರು ಯೆಹೋಶುವನನ್ನು ಹಿಂದಟ್ಟಿದರು. ಹೀಗೆ ಅವರು ಆ ಪಟ್ಟಣದಿಂದ ಹೊರಬಂದರು.</verse>
				<verse number="17">ಆಯಿ ಎಂಬ ಪಟ್ಟಣದಲ್ಲಿಯೂ ಬೇತೇಲಿನಲ್ಲಿಯೂ ಇಸ್ರಾಯೇಲಿನ ಹಿಂದೆ ಹೊರಟು ಹೋಗದ ಮನುಷ್ಯನು ಒಬ್ಬನೂ ಇರಲಿಲ್ಲ. ಪಟ್ಟಣವನ್ನು ತೆರೆದಿಟ್ಟು ಹೋಗಿ ಇಸ್ರಾಯೇಲರನ್ನು ಹಿಂದಟ್ಟಿದರು.</verse>
				<verse number="18">ಆಗ ಯೆಹೋವ ದೇವರು ಯೆಹೋಶುವನಿಗೆ, “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿ ಎಂಬ ಪಟ್ಟಣಕ್ಕೆ ಎದುರಾಗಿ ಚಾಚು. ಏಕೆಂದರೆ ಅದನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು,” ಎಂದರು. ಹಾಗೆಯೇ ಅವನು ತನ್ನ ಕೈಯಲ್ಲಿರುವ ಈಟಿಯನ್ನು ಪಟ್ಟಣಕ್ಕೆ ಎದುರಾಗಿ ಚಾಚಿದನು.</verse>
				<verse number="19">ಆಗ ಹೊಂಚುಗಾರರು ತ್ವರೆಯಾಗಿ ತಮ್ಮ ಸ್ಥಳದಿಂದ ಎದ್ದು ಪಟ್ಟಣದಲ್ಲಿ ಪ್ರವೇಶಿಸಿ, ಸೆರೆಹಿಡಿದು ಕೂಡಲೆ ಅದಕ್ಕೆ ಬೆಂಕಿಯನ್ನು ಹಚ್ಚಿದರು.</verse>
				<verse number="20">ಆಯಿ ಎಂಬ ಪಟ್ಟಣದ ಮನುಷ್ಯರು ಹಿಂದಕ್ಕೆ ತಿರುಗಿ ನೋಡಿದಾಗ, ಪಟ್ಟಣದ ಹೊಗೆ ಹೊತ್ತಿ ಆಕಾಶಕ್ಕೆ ಏಳುವುದನ್ನು ಕಂಡರು. ಹೇಗಾದರೂ ಓಡಿಹೋಗಲು ಅವರಿಗೆ ತ್ರಾಣ ಇಲ್ಲದೆ ಹೋಯಿತು. ಆಗ ಮರುಭೂಮಿಗೆ ಓಡಿ ಹೋದ ಇಸ್ರಾಯೇಲರು ಹಿಂದಟ್ಟಿದವರ ಕಡೆಗೆ ತಿರುಗಿದರು.</verse>
				<verse number="21">ಪಟ್ಟಣವು ಹೊಂಚುಗಾರರಿಗೆ ಸ್ವಾಧೀನವಾದುದನ್ನೂ ಹೊಗೆ ಆಕಾಶಕ್ಕೆ ಏರುತ್ತಿದ್ದುದನ್ನೂ ಕಂಡಾಗ ಯೆಹೋಶುವನೂ ಇಸ್ರಾಯೇಲರೂ ಹಿಂದಿರುಗಿ ಆಯಿ ಎಂಬ ಪಟ್ಟಣದ ಜನರ ಮೇಲೆ ಬಿದ್ದರು.</verse>
				<verse number="22">ಅವರು ಪಟ್ಟಣದೊಳಗಿಂದ ಇವರಿಗೆ ಎದುರಾಗಿ ಬಂದ ಕಾರಣ, ಅವರು ಈ ಕಡೆ ಆ ಕಡೆ ಇರುವ ಇಸ್ರಾಯೇಲರ ಮಧ್ಯದಲ್ಲಿ ಸಿಕ್ಕಿದರು. ಅವರಲ್ಲಿ ಇಬ್ಬರೂ ತಪ್ಪಿಸಿಕೊಂಡ ಹಾಗೆಯೂ ಅವರನ್ನು ಹೊಡೆದರು.</verse>
				<verse number="23">ಆಯಿ ಎಂಬ ಪಟ್ಟಣದ ಅರಸನನ್ನು ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ತಂದರು.</verse>
				<verse number="24">ಇಸ್ರಾಯೇಲರು ಮರುಭೂಮಿಯಲ್ಲಿಯೂ ಬಯಲಿನಲ್ಲಿಯೂ ಓಡಿಸಿದ ಆಯಿ ಎಂಬ ಪಟ್ಟಣದ ನಿವಾಸಿಗಳೆಲ್ಲರನ್ನೂ ಖಡ್ಗದಿಂದ ಸಂಹರಿಸಿದ ನಂತರ ಅವರೆಲ್ಲರೂ ಪಟ್ಟಣಕ್ಕೆ ಹೋಗಿ ಅಲ್ಲಿದ್ದವರನ್ನು ಕೊಂದರು.</verse>
				<verse number="25">ಆ ದಿನದಲ್ಲಿ ಆಯಿ ಎಂಬ ಪಟ್ಟಣದಲ್ಲಿಯ ಹನ್ನೆರಡು ಸಾವಿರ ಜನರು ಹತರಾದರು.</verse>
				<verse number="26">ಆಯಿ ಎಂಬ ಪಟ್ಟಣದ ನಿವಾಸಿಗಳೆಲ್ಲರನ್ನೂ ಸಂಪೂರ್ಣ ನಾಶವಾಗುವವರೆಗೂ ಯೆಹೋಶುವನು ಚಾಚಿಕೊಂಡಿರುವ ತನ್ನ ಕೈಯಲ್ಲಿದ್ದ ಈಟಿಯನ್ನು ಹಿಂದೆಗೆಯಲಿಲ್ಲ.</verse>
				<verse number="27">ಯೆಹೋವ ದೇವರು ಯೆಹೋಶುವನಿಗೆ ಆಜ್ಞಾಪಿಸಿದ ಮಾತಿನ ಪ್ರಕಾರವೇ ಇಸ್ರಾಯೇಲರು ಆ ಪಟ್ಟಣದ ಪಶುಪ್ರಾಣಿಗಳನ್ನೂ, ಕೊಳ್ಳೆಯನ್ನೂ ತಮಗೋಸ್ಕರ ಇಟ್ಟುಕೊಂಡರು.</verse>
				<verse number="28">ಯೆಹೋಶುವನು ಆಯಿ ಎಂಬ ಪಟ್ಟಣವನ್ನು ಸುಟ್ಟುಬಿಟ್ಟು, ಅದನ್ನು ಮರಳಿ ಕಟ್ಟಲಾಗದಂತೆ ಹಾಳು ದಿಬ್ಬವಾಗಿ ಮಾಡಿದನು. ಅದು ಇಂದಿನವರೆಗೂ ಹಾಗೆಯೇ ಉಳಿದಿದೆ.</verse>
				<verse number="29">ಆಯಿ ಎಂಬ ಪಟ್ಟಣದ ಅರಸನನ್ನು ಸಾಯಂಕಾಲದವರೆಗೂ ಒಂದು ಮರದಲ್ಲಿ ತೂಗಿಹಾಕಿಸಿದನು. ಸೂರ್ಯ ಅಸ್ತಮಿಸುವಾಗ ಯೆಹೋಶುವನು ಅವನ ಹೆಣವನ್ನು ಮರದಿಂದ ಇಳಿಸಿ, ಅದನ್ನು ಆ ಪಟ್ಟಣದ ಬಾಗಿಲಿನ ದ್ವಾರದಲ್ಲಿ ಹಾಕಲು ಆಜ್ಞಾಪಿಸಿದನು. ಆಗ ಅವರು ಹಾಗೆಯೇ ಮಾಡಿದರು. ಆ ದೊಡ್ಡ ಕಲ್ಲು ಕುಪ್ಪೆಯನ್ನು ಅದರ ಮೇಲೆ ಇಟ್ಟರು. ಅದು ಇಂದಿನವರೆಗೂ ಇದೆ.</verse>
				<verse number="30">ಆಗ ಯೆಹೋಶುವನು ಏಬಾಲ್ ಪರ್ವತದಲ್ಲಿ ಇಸ್ರಾಯೇಲಿನ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿದನು.</verse>
				<verse number="31">ಸೇವಕನಾದ ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿದಂತೆ, ಮೋಶೆಯ ನಿಯಮದಲ್ಲಿ ಬರೆದಿರುವ ಪ್ರಕಾರ, ಯೆಹೋವ ದೇವರಿಗೆ ಉಳಿಮುಟ್ಟದ ಪೂರ್ಣವಾದ ಕಲ್ಲುಗಳಿಂದ ಬಲಿಪೀಠವನ್ನು ಕಟ್ಟಿದನು. ಆಗ ಅವರು ಅದರ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನ ಸಮರ್ಪಣೆಗಳನ್ನೂ ಅರ್ಪಿಸಿದರು.</verse>
				<verse number="32">ಅಲ್ಲಿ ಅವನು ಇಸ್ರಾಯೇಲರ ಸಮಕ್ಷಮದಲ್ಲಿ ಮೋಶೆ ಬರೆದಿದ್ದ ಮೋಶೆಯ ನಿಯಮದ ಪ್ರತಿಯನ್ನು ಬರೆದನು.</verse>
				<verse number="33">ಇಸ್ರಾಯೇಲರೆಲ್ಲರೂ ಅವರ ಹಿರಿಯರೂ ಅವರ ಅಧಿಕಾರಿಗಳೂ ಅವರ ನ್ಯಾಯಾಧಿಪತಿಗಳೂ ಪರದೇಶಸ್ಥರೂ ಸ್ವದೇಶಸ್ಥರೂ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜೀಮ್ ಪರ್ವತದ ಕಡೆಗೂ ಅರ್ಧ ಏಬಾಲ್ ಪರ್ವತದ ಮುಂದೆಯೂ ನಿಂತರು. ಯೆಹೋವ ದೇವರ ಸೇವಕ ಮೋಶೆ ಇಸ್ರಾಯೇಲರನ್ನು ಆಶೀರ್ವದಿಸುವಂತೆ ಮುಂಚೆ ವಾಕ್ಯಗಳನ್ನು ಕೊಟ್ಟಾಗ ಆಜ್ಞಾಪಿಸಿದ ಹಾಗೆಯೇ ನಿಂತರು.</verse>
				<verse number="34">ತರುವಾಯ ಯೆಹೋಶುವನು ದೇವರ ನಿಯಮ ಗ್ರಂಥದಲ್ಲಿ ಬರೆದಿರುವ ಎಲ್ಲಾ ಮಾತುಗಳನ್ನೂ ಆಶೀರ್ವಾದಗಳನ್ನೂ, ಶಾಪಗಳನ್ನೂ ಓದಿದನು.</verse>
				<verse number="35">ಮೋಶೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಮಹಿಳೆಯರಿಗೂ, ಮಕ್ಕಳಿಗೂ, ಅನ್ಯದೇಶೀಯರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಓದಿದನು.</verse>
			</chapter>
			<chapter number="9">
				<verse number="1">ಯೊರ್ದನ್ ನದಿಯ ಈಚೆಯಲ್ಲಿ ಬೆಟ್ಟಗಳಲ್ಲಿಯೂ ತಗ್ಗುಗಳಲ್ಲಿಯೂ ಲೆಬನೋನಿಗೆ ಎದುರಾದ ಮೆಡಿಟೆರಿಯನ್ ಸಮುದ್ರದ ಸಮಸ್ತ ಪ್ರಾಂತಗಳಲ್ಲಿಯೂ ಇರುವ ಹಿತ್ತಿಯರ, ಅಮೋರಿಯರ, ಕಾನಾನ್ಯರ, ಪೆರಿಜೀಯರ, ಹಿವ್ವಿಯರ, ಯೆಬೂಸಿಯರ ಅರಸರು ಇದನ್ನು ಕೇಳಿದರು.</verse>
				<verse number="2">ಆಗ ಅವರು ಯೆಹೋಶುವನಿಗೂ ಇಸ್ರಾಯೇಲರಿಗೂ ವಿರುದ್ಧ ಯುದ್ಧಮಾಡುವುದಕ್ಕೆ ಒಟ್ಟಾಗಿ ಕೂಡಿಕೊಂಡರು.</verse>
				<verse number="3">ಆದರೆ ಗಿಬ್ಯೋನಿನ ನಿವಾಸಿಗಳು ಯೆಹೋಶುವನು ಯೆರಿಕೋವಿಗೂ ಆಯಿಗೂ ಮಾಡಿದ್ದನ್ನು ಕೇಳಿದಾಗ,</verse>
				<verse number="4">ಒಂದು ಉಪಾಯವನ್ನು ಮಾಡಿದರು. ಅದೇನೆಂದರೆ, ಅವರು ರಾಯಭಾರಿಗಳ ಹಾಗೆ ತೋರಿಸುವಂತೆ ಹಳೆಯ ಗೋಣಿ ಚೀಲಗಳನ್ನೂ ತೇಪೆ ಹಾಕಿದ ಹಳೆಯದಾದ ದ್ರಾಕ್ಷಾರಸದ ಬುದ್ದಲಿಗಳನ್ನೂ ಕಟ್ಟಿಕೊಂಡು, ತಮ್ಮ ಕತ್ತೆಗಳ ಮೇಲೆ ಹಾಕಿಕೊಂಡು ಹೋದರು.</verse>
				<verse number="5">ತೇಪೆ ಹಾಕಿದ ಹಳೆಯದಾದ ಕೆರಗಳನ್ನು ತಮ್ಮ ಕಾಲುಗಳಲ್ಲಿ ಮೆಟ್ಟಿಕೊಂಡು ಹಳೆಯ ಬಟ್ಟೆಗಳನ್ನು ತೊಟ್ಟುಕೊಂಡು, ಒಣಗಿ ಬೂಷ್ಟು ಹಿಡಿದ ರೊಟ್ಟಿಯನ್ನೂ ತೆಗೆದುಕೊಂಡರು.</verse>
				<verse number="6">ಅನಂತರ ಅವರು ಗಿಲ್ಗಾಲಿನಲ್ಲಿ ಇರುವ ಪಾಳೆಯಕ್ಕೆ ಸೇರಿ ಯೆಹೋಶುವನ ಬಳಿಗೆ ಬಂದರು. ಅವರು ಅವನಿಗೂ ಇಸ್ರಾಯೇಲರಿಗೂ, “ನಾವು ದೂರದೇಶದಿಂದ ಬಂದೆವು. ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳಿರಿ,” ಎಂದರು.</verse>
				<verse number="7">ಆಗ ಇಸ್ರಾಯೇಲರು ಹಿವ್ವಿಯರಾದ ಅವರಿಗೆ, “ನೀವು ಒಂದು ವೇಳೆ ನಮ್ಮ ಹತ್ತಿರದಲ್ಲಿ ವಾಸಿಸುವವರು ಆಗಿರಬಹುದು. ನಾವು ನಿಮ್ಮ ಸಂಗಡ ಒಡಂಬಡಿಕೆಯನ್ನು ಮಾಡುವುದು ಹೇಗೆ?” ಎಂದರು.</verse>
				<verse number="8">ಅದಕ್ಕವರು ಯೆಹೋಶುವನಿಗೆ, “ನಾವು ನಿನ್ನ ಸೇವಕರು,” ಎಂದರು. ಆಗ ಯೆಹೋಶುವನು ಅವರಿಗೆ, “ನೀವು ಯಾರು? ಎಲ್ಲಿಂದ ಬಂದಿರಿ?” ಎಂದನು.</verse>
				<verse number="9">ಅವರು ಅವನಿಗೆ, “ನಿಮ್ಮ ದೇವರಾದ ಯೆಹೋವ ದೇವರ ಹೆಸರಿನ ಮಹತ್ವ ಕೇಳಿ ನಿನ್ನ ಸೇವಕರಾದ ನಾವು ದೂರದೇಶದಿಂದ ಬಂದಿದ್ದೇವೆ. ಏಕೆಂದರೆ ದೇವರ ಕೀರ್ತಿಯನ್ನೂ, ಅವರು ಈಜಿಪ್ಟಿನಲ್ಲಿ ಮಾಡಿದ ಎಲ್ಲವನ್ನೂ ಕೇಳಿದ್ದೇವೆ.</verse>
				<verse number="10">ಯೊರ್ದನ್ ನದಿಗೆ ಆಚೆ ಇರುವ ಅಮೋರಿಯರ ಇಬ್ಬರು ಅರಸುಗಳಾದ ಹೆಷ್ಬೋನಿನ ಅರಸನಾದ ಸೀಹೋನನಿಗೂ, ಅಷ್ಟಾರೋತಿನಲ್ಲಿದ್ದ ಬಾಷಾನಿನ ಅರಸನಾದ ಓಗನಿಗೂ ಮಾಡಿದ್ದೆಲ್ಲವನ್ನೂ ನಾವು ಕೇಳಿದ್ದೇವೆ.</verse>
				<verse number="11">ನಮ್ಮ ಹಿರಿಯರೂ, ನಮ್ಮ ದೇಶವಾಸಿಗಳಾದ ಜನರೆಲ್ಲರೂ ನಮಗೆ ಹೇಳಿದ್ದೇನೆಂದರೆ, ‘ನೀವು ಪ್ರಯಾಣಕ್ಕಾಗಿ ರೊಟ್ಟಿಯನ್ನು ತೆಗೆದುಕೊಂಡು ಅವರೆದುರಿಗೆ ಹೋಗಿ, ಅವರಿಗೆ ನಾವು ನಿಮ್ಮ ಸೇವಕರು ಆದಕಾರಣ ಈಗ ನಮ್ಮ ಸಂಗಡ ಒಡಂಬಡಿಕೆ ಮಾಡಿಕೊಳ್ಳಿರಿ ಎಂದು ಹೇಳಿರಿ,’ ಎಂದರು.</verse>
				<verse number="12">ಆದರೆ ನಿಮ್ಮ ಬಳಿಗೆ ಬರುವುದಕ್ಕೆ ನಾವು ಹೊರಟ ದಿನದಲ್ಲಿ ನಮ್ಮ ಮಾರ್ಗ ಪ್ರಯಾಣಕ್ಕೆ ನಮ್ಮ ಮನೆಯೊಳಗೆ ನಮ್ಮ ಒಲೆಯ ಮೇಲೆ ಬಿಸಿ ರೊಟ್ಟಿಗಳನ್ನು ತೆಗೆದುಕೊಂಡೆವು.</verse>
				<verse number="13">ಈಗ ಅವು ಒಣಗಿ ಬೂಷ್ಟು ಹಿಡಿದವುಗಳಗಿವೆ. ನಾವು ದ್ರಾಕ್ಷಾರಸ ತುಂಬುವಾಗ ಈ ಬುದ್ದಲಿಗಳು ಹೊಸದಾಗಿದ್ದವು. ಇಗೋ, ಈಗ ಅವು ಹರಿದು ಹೋಗಿವೆ. ಇದಲ್ಲದೆ ಈ ನಮ್ಮ ವಸ್ತ್ರಗಳೂ ನಮ್ಮ ಕೆರಗಳೂ ಪ್ರಯಾಣ ಬಹಳ ದೂರವಾದ್ದರಿಂದ ಹಳೆಯದಾಗಿವೆ,” ಎಂದರು.</verse>
				<verse number="14">ಆಗ ಇಸ್ರಾಯೇಲರು ಅವರ ಆಹಾರದಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಅವರು ಯೆಹೋವ ದೇವರಿಂದ ಆಲೋಚನೆಯನ್ನು ಕೇಳಲಿಲ್ಲ.</verse>
				<verse number="15">ಯೆಹೋಶುವನು ಅವರ ಸಂಗಡ ಸಮಾಧಾನದ ಒಡಂಬಡಿಕೆ ಮಾಡಿಕೊಂಡನು. ಅವರನ್ನು ಜೀವದಿಂದ ಉಳಿಸುವುದಕ್ಕೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಇದಲ್ಲದೆ ಸಭೆಯ ಪ್ರಧಾನರು ಅವರಿಗೆ ಪ್ರಮಾಣ ಮಾಡಿದರು.</verse>
				<verse number="16">ಆದರೆ ಅವರ ಸಂಗಡ ಒಡಂಬಡಿಕೆ ಮಾಡಿ, ಮೂರು ದಿವಸಗಳಾದ ತರುವಾಯ ಅವರು ತಮ್ಮ ನೆರೆಯವರೆಂದೂ, ತಮ್ಮಲ್ಲಿ ಇರುವವರೆಂದೂ ತಿಳಿದುಬಂತು.</verse>
				<verse number="17">ಆಗ ಇಸ್ರಾಯೇಲರು ಪ್ರಯಾಣ ಮಾಡುವಾಗ ಮೂರನೆಯ ದಿವಸದಲ್ಲಿ ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ ಯಾರೀಮ್ ಎಂಬ ಅವರ ಪಟ್ಟಣಗಳಿಗೆ ಬಂದರು.</verse>
				<verse number="18">ಆದರೆ ಪ್ರಧಾನರು ಅವರಿಗೆ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮೇಲೆ ಪ್ರಮಾಣ ಮಾಡಿದ್ದರಿಂದ ಇಸ್ರಾಯೇಲರು ಅವರ ಮೇಲೆ ದಾಳಿಮಾಡಲಿಲ್ಲ. ಆದರೆ ಇಸ್ರಾಯೇಲರೆಲ್ಲರೂ ಪ್ರಧಾನರಿಗೆ ವಿರೋಧವಾಗಿ ಗೊಣಗುಟ್ಟಿದರು.</verse>
				<verse number="19">ಆಗ ಸಕಲ ಪ್ರಧಾನರು ಎಲ್ಲಾ ಜನರಿಗೆ, “ನಾವು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮೇಲೆ ಅವರಿಗೆ ಪ್ರಮಾಣ ಮಾಡಿದ್ದೇವು. ಆದ್ದರಿಂದ ಅವರನ್ನು ನಾವು ಮುಟ್ಟಕೂಡದು.</verse>
				<verse number="20">ನಾವು ಅವರಿಗೆ ಇಟ್ಟ ಆಣೆಯ ನಿಮಿತ್ತ ಕೋಪವು ನಮ್ಮ ಮೇಲೆ ಬಾರದ ಹಾಗೆ ನಾವು ಅವರನ್ನು ಜೀವದಿಂದ ಉಳಿಸಬೇಕು. ಆದರೆ ನಾವು ಅವರಿಗೆ ಹೀಗೆ ಮಾಡೋಣ.</verse>
				<verse number="21">ಅದು ಏನೆಂದರೆ, ಪ್ರಧಾನರಾದ ನಾವು ಅವರಿಗೆ ಹೇಳಿದ ಹಾಗೆಯೇ ಅವರು ಜೀವದಿಂದ ಇರಲಿ. ಆದರೆ ಅವರು ಇಸ್ರಾಯೇಲಿನ ಎಲ್ಲಾ ಸಮೂಹಕ್ಕೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಲಿ,” ಪ್ರಧಾನರ ಮಾತಿನಂತೆಯೇ ಆಯಿತು.</verse>
				<verse number="22">ತರುವಾಯ ಯೆಹೋಶುವನು ಗಿಬ್ಯೋನ್ಯರನ್ನು ಕರೆಯಿಸಿ ಅವರಿಗೆ, “ನೀವು ನಮ್ಮ ಮಧ್ಯದಲ್ಲಿ ವಾಸಿಸುವವರಾಗಿದ್ದರೂ, ‘ನಾವು ನಿಮಗೆ ಬಹಳ ದೂರವಾಗಿರುವವರು,’ ಎಂದು ಹೇಳಿ ನಮ್ಮನ್ನು ಮೋಸಗೊಳಿಸಿದ್ದೇಕೆ?</verse>
				<verse number="23">ಈಗ ನೀವು ಶಾಪಗ್ರಸ್ತರು, ನೀವು ಯಾವಾಗಲೂ ದಾಸತ್ವದಿಂದ ಬಿಡುಗಡೆಯಾಗುವುದಿಲ್ಲ. ನೀವು ನನ್ನ ದೇವರ ಮನೆಗೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರುವಿರಿ,” ಎಂದು ಹೇಳಿದನು.</verse>
				<verse number="24">ಅದಕ್ಕವರು ಯೆಹೋಶುವನಿಗೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ದೇಶವನ್ನೆಲ್ಲಾ ಒಪ್ಪಿಸಿಕೊಡುವುದಕ್ಕೂ, ದೇಶದ ನಿವಾಸಿಗಳನ್ನೆಲ್ಲಾ ನಿಮ್ಮ ಮುಂದೆ ನಾಶಮಾಡುವುದಕ್ಕೂ ತಮ್ಮ ಸೇವಕ ಮೋಶೆಗೆ ಆಜ್ಞಾಪಿಸಿದ್ದಾರೆಂದು, ನಿಮ್ಮ ಸೇವಕರಾದ ನಾವು ಕೇಳಿದೆವು. ಆದ್ದರಿಂದ ನಾವು ನಮ್ಮ ಪ್ರಾಣಕ್ಕಾಗಿ ಬಹಳ ಭಯಪಟ್ಟು ಈ ಕಾರ್ಯವನ್ನು ಮಾಡಿದೆವು.</verse>
				<verse number="25">ಇಗೋ, ಈಗಲೂ ನಾವು ನಿನ್ನ ಕೈಯಲ್ಲಿಯೇ ಇದ್ದೇವೆ. ನಿನ್ನ ದೃಷ್ಟಿಗೆ ಒಳ್ಳೆಯದಾಗಿಯೂ, ಸರಿಯಾಗಿಯೂ ತೋಚುವ ಹಾಗೆ ನಮಗೆ ಮಾಡು,” ಎಂದು ಉತ್ತರಕೊಟ್ಟರು.</verse>
				<verse number="26">ಆ ಪ್ರಕಾರವೇ ಯೆಹೋಶುವನು ಅವರಿಗೆ ಹೇಳಿದಂತೆ ಮಾಡಿದನು. ಅವರನ್ನು ಕೊಂದು ಹಾಕದ ಹಾಗೆ ಇಸ್ರಾಯೇಲರ ಕೈಯಿಂದ ತಪ್ಪಿಸಿದನು.</verse>
				<verse number="27">ಯೆಹೋಶುವನು ಆ ದಿನ ಇರುವ ಹಾಗೆ ಗಿಬ್ಯೋನಿನವರ ಸಮೂಹಕ್ಕೂ ಯೆಹೋವ ದೇವರು ಆಯ್ದುಕೊಳ್ಳುವ ಸ್ಥಳದಲ್ಲಿರುವ ಅವರ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರಾಗಿಯೂ ನೀರು ತರುವವರಾಗಿಯೂ ನೇಮಿಸಿದನು. ಅವರು ಇಂದಿನವರೆಗೂ ಅದೇ ಕೆಲಸ ಮಾಡುತ್ತಾರೆ.</verse>
			</chapter>
			<chapter number="10">
				<verse number="1">ಈ ಸಮಯದಲ್ಲಿ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಯೆಹೋಶುವನು ಯೆರಿಕೋವನ್ನೂ ಅದರ ಅರಸನನ್ನೂ ಹೇಗೋ ಹಾಗೆಯೇ ಆಯಿ ಎಂಬ ಪಟ್ಟಣವನ್ನು ಸ್ವಾಧೀನಪಡಿಸಿಕೊಂಡು, ಅದರ ಅರಸನನ್ನು ಸಂಹರಿಸಿಬಿಟ್ಟು ಸಂಪೂರ್ಣ ನಾಶಮಾಡಿದನೆಂಬ ಸಂಗತಿಯನ್ನು ಅವನು ಕೇಳಿದ್ದನು. ಹಾಗೆಯೇ ಗಿಬ್ಯೋನಿನ ನಿವಾಸಿಗಳು ಇಸ್ರಾಯೇಲಿನ ಸಂಗಡ ಸಮಾಧಾನ ಮಾಡಿಕೊಂಡು ಅವರಲ್ಲಿ ಇದ್ದರೆಂದೂ ಕೇಳಿದ್ದನು.</verse>
				<verse number="2">ಅದೋನೀಚೆದೆಕನು ಅವನ ಜನರೂ ಬಹು ಭಯಪಟ್ಟರು. ಏಕೆಂದರೆ ಗಿಬ್ಯೋನ್ ಒಂದು ರಾಜಧಾನಿಯಷ್ಟು ಶ್ರೇಷ್ಠ ಪಟ್ಟಣವೂ ಅದು ಆಯಿ ಪಟ್ಟಣಕ್ಕಿಂತಲೂ ದೊಡ್ಡದಾಗಿತ್ತು. ಇದಲ್ಲದೆ ಅದರಲ್ಲಿರುವ ಜನರು ಪರಾಕ್ರಮಶಾಲಿಗಳಾಗಿದ್ದರು.</verse>
				<verse number="3">ಆದ್ದರಿಂದ ಯೆರೂಸಲೇಮಿನ ಅರಸನಾದ ಅದೋನೀಚೆದೆಕನು ಹೆಬ್ರೋನಿನ ಅರಸನಾದ ಹೋಹಾಮನಿಗೂ ಯರ್ಮೂತಿನ ಅರಸನಾದ ಪಿರಾಮನಿಗೂ ಲಾಕೀಷಿನ ಅರಸನಾದ ಯಾಫೀಯನಿಗೂ ಎಗ್ಲೋನಿನ ಅರಸನಾದ ದೆಬೀರನಿಗೂ ದೂತರನ್ನು ಕಳುಹಿಸಿದನು:</verse>
				<verse number="4">“ಗಿಬ್ಯೋನರು ಯೆಹೋಶುವನ ಮತ್ತು ಇಸ್ರಾಯೇಲರ ಸಂಗಡ ಸಮಾಧಾನ ಮಾಡಿಕೊಂಡದ್ದರಿಂದ ನಾವು ಅದನ್ನು ದಾಳಿಮಾಡುವಂತೆ ನೀವು ನನ್ನ ಬಳಿಗೆ ಬಂದು ನನಗೆ ಸಹಾಯಮಾಡಿರಿ,” ಎಂದು ಹೇಳಿ ಕಳುಹಿಸಿದನು.</verse>
				<verse number="5">ಹಾಗೆಯೇ ಅಮೋರಿಯರ ಐದು ಮಂದಿ ಅರಸರಾದ, ಯೆರೂಸಲೇಮಿನ ಅರಸನೂ ಹೆಬ್ರೋನಿನ ಅರಸನೂ ಯರ್ಮೂತಿನ ಅರಸನೂ ಲಾಕೀಷಿನ ಅರಸನೂ ಎಗ್ಲೋನಿನ ಅರಸನೂ ಒಟ್ಟುಸೇರಿದರು. ಇವರೂ ಇವರ ಸೈನ್ಯವೂ ಹೊರಟುಹೋಗಿ ಗಿಬ್ಯೋನಿನ ಮುಂದೆ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿದರು.</verse>
				<verse number="6">ಆಗ ಗಿಬ್ಯೋನಿನ ಜನರು, “ಪರ್ವತಗಳಲ್ಲಿ ವಾಸವಾಗಿರುವ ಅಮೋರಿಯರ ಅರಸುಗಳೆಲ್ಲರೂ ನಮಗೆ ವಿರೋಧವಾಗಿ ಕೂಡಿಬಂದಿದ್ದಾರೆ. ನಿನ್ನ ಸೇವಕರರಾದ ನಮ್ಮನ್ನು ಕೈಬಿಡದೆ ಶೀಘ್ರವಾಗಿ ನಮ್ಮ ಬಳಿಗೆ ಬಂದು, ನಮ್ಮನ್ನು ಕಾಪಾಡು! ನಮಗೆ ಸಹಾಯಮಾಡು,” ಎಂದು ಗಿಲ್ಗಾಲಿನಲ್ಲಿ ಪಾಳೆಯ ಮಾಡಿದ್ದ ಯೆಹೋಶುವನ ಬಳಿಗೆ ಹೇಳಿ ಕಳುಹಿಸಿದರು.</verse>
				<verse number="7">ಆಗ ಯೆಹೋಶುವನು ಗಿಲ್ಗಾಲಿನಿಂದ, ಸಮಸ್ತ ಯುದ್ಧವೀರರೂ ಉಳಿದ ಪರಾಕ್ರಮಶಾಲಿಗಳ ಸಮೇತ ಹೊರಟನು.</verse>
				<verse number="8">ಯೆಹೋವ ದೇವರು ಯೆಹೋಶುವನಿಗೆ, “ನೀನು ಅವರಿಗೆ ಭಯಪಡಬೇಡ, ನಾನು ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಕೊಟ್ಟಿದ್ದೇನೆ. ಅವರಲ್ಲಿ ಒಬ್ಬನಾದರೂ ನಿನ್ನ ಎದುರಿನಲ್ಲಿ ನಿಲ್ಲುವುದಿಲ್ಲ,” ಎಂದರು.</verse>
				<verse number="9">ಆದ್ದರಿಂದ ಯೆಹೋಶುವನು ಗಿಲ್ಗಾಲಿನಿಂದ ರಾತ್ರಿಯೆಲ್ಲಾ ಪ್ರಯಾಣಮಾಡಿ, ತಕ್ಷಣವೇ ಅವರ ಮೇಲೆ ದಾಳಿಮಾಡಿದನು.</verse>
				<verse number="10">ಆಗ ಯೆಹೋವ ದೇವರು ಅವರನ್ನು ಇಸ್ರಾಯೇಲಿನ ಮುಂದೆ ಕಳವಳಗೊಳಿಸಿದರು. ಯೆಹೋಶುವನು ಮತ್ತು ಇಸ್ರಾಯೇಲರು ಗಿಬ್ಯೋನಿನಲ್ಲಿ ಸಂಪೂರ್ಣವಾಗಿ ಸಂಹರಿಸಿ, ಬೇತ್ ಹೋರೋನಿಗೆ ಹೋಗುವ ಮಾರ್ಗದಲ್ಲಿ ಅವರನ್ನು ಹಿಂದಟ್ಟಿ, ಅಜೇಕ, ಮಕ್ಕೇದದ ಎಂಬ ಊರುಗಳವರೆಗೆ ಹೊಡೆದರು.</verse>
				<verse number="11">ಅವರು ಬೇತ್ ಹೋರೋನಿನಿಂದ ಇಳಿದು ಅಜೇಕದವರೆಗೆ ಇಸ್ರಾಯೇಲಿನ ಮುಂದೆ ಓಡಿ ಹೋಗುವಾಗ, ಅವರ ಮೇಲೆ ಯೆಹೋವ ದೇವರು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಇಸ್ರಾಯೇಲರ ಖಡ್ಗದ ದಾಳಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿಯಾಗಿದ್ದರು.</verse>
				<verse number="12">ಯೆಹೋವ ದೇವರು ಅಮೋರಿಯರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿದ ಆ ದಿನದಲ್ಲಿ ಯೆಹೋಶುವನು ಯೆಹೋವ ದೇವರ ಸಂಗಡ ಮಾತನಾಡಿ ಇಸ್ರಾಯೇಲಿನ ಮುಂದೆ ಹೀಗೆ ಹೇಳಿದನು, “ಸೂರ್ಯನೇ ನೀನು ಗಿಬ್ಯೋನಿನ ಮೇಲೆ ನಿಲ್ಲು; ಚಂದ್ರನೇ, ನೀನು ಅಯ್ಯಾಲೋನ್ ಕಣಿವೆಯಲ್ಲಿ ಸ್ಥಿರವಾಗಿ ನಿಲ್ಲು.”</verse>
				<verse number="13">ಆದ್ದರಿಂದ ಇಸ್ರಾಯೇಲರು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವವರೆಗೆ ಸೂರ್ಯ ಚಂದ್ರರು ನೆಲೆಯಾಗಿ ನಿಂತಿದ್ದರು. ಇದು ಯಾಷಾರ್ ಪುಸ್ತಕದಲ್ಲಿ ಬರೆದಿದೆ. ಹೀಗೆ ಸೂರ್ಯ ಅಸ್ತಮಿಸಲು ತ್ವರೆಮಾಡದೆ ಹೆಚ್ಚು ಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿತು.</verse>
				<verse number="14">ಯೆಹೋವ ದೇವರು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥ ಆ ದಿನಕ್ಕೆ ಸಮಾನವಾದ ದಿನವು ಹಿಂದೆಯೂ ಇಲ್ಲ, ಮುಂದೆಯೂ ಇಲ್ಲ. ಏಕೆಂದರೆ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು.</verse>
				<verse number="15">ತರುವಾಯ ಯೆಹೋಶುವನು ಸಮಸ್ತ ಇಸ್ರಾಯೇಲಿನ ಕೂಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂದಿರುಗಿದನು.</verse>
				<verse number="16">ಆದರೆ ಆ ಐದು ಮಂದಿ ಅರಸರು ಓಡಿಹೋಗಿ ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡರು.</verse>
				<verse number="17">ಆ ಐದು ಮಂದಿ ಅರಸರು ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡವರಾಗಿ ಸಿಕ್ಕಿದರೆಂದು ಯೆಹೋಶುವನಿಗೆ ತಿಳಿಯಿತು.</verse>
				<verse number="18">ಆಗ ಯೆಹೋಶುವನು, “ದೊಡ್ಡ ಕಲ್ಲುಗಳನ್ನು ಗವಿಯ ಬಾಯಿಗೆ ಹೊರಳಿಸಿರಿ. ಆ ಸ್ಥಳದಲ್ಲಿ ಅವರನ್ನು ಕಾಯುವಂತೆ ಕೆಲವರನ್ನು ನೇಮಿಸಿರಿ.</verse>
				<verse number="19">ನೀವು ನಿಲ್ಲಬೇಡಿರಿ, ನಿಮ್ಮ ಶತ್ರುಗಳನ್ನು ಹಿಂದಟ್ಟಿರಿ, ದಾಳಿಮಾಡಿರಿ. ತಮ್ಮ ಪಟ್ಟಣಗಳಲ್ಲಿ ಪ್ರವೇಶಿಸದಂತೆ ಮಾಡಿರಿ. ನಿಮ್ಮ ದೇವರಾದ ಯೆಹೋವ ದೇವರು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾರೆ,” ಎಂದನು.</verse>
				<verse number="20">ಯೆಹೋಶುವನೂ ಇಸ್ರಾಯೇಲರೂ ಅವರನ್ನು ಸಂಪೂರ್ಣವಾಗಿ ಸಂಹರಿಸಿದರು. ಆದರೂ ಅವರಲ್ಲಿ ಉಳಿದವರು ಕೋಟೆಗಳುಳ್ಳ ಪಟ್ಟಣಗಳಲ್ಲಿ ಸೇರಿಕೊಂಡರು.</verse>
				<verse number="21">ಇಸ್ರಾಯೇಲರು ಮಕ್ಕೇದದಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ಸುರಕ್ಷಿತವಾಗಿ ಹಿಂದಿರುಗಿ ಬಂದರು. ಇಸ್ರಾಯೇಲರಿಗೆ ವಿರೋಧವಾಗಿ ಒಬ್ಬನೂ ಮಾತಾಡಲಿಲ್ಲ.</verse>
				<verse number="22">ಆಗ ಯೆಹೋಶುವನು, “ನೀವು ಗವಿಯ ಬಾಯಿಯನ್ನು ತೆರೆದು ಆ ಐದು ಮಂದಿ ಅರಸರನ್ನು ಗವಿಯೊಳಗಿಂದ ನನ್ನ ಬಳಿಗೆ ತನ್ನಿರಿ,” ಎಂದನು.</verse>
				<verse number="23">ಅವರು ಹಾಗೆಯೇ ಮಾಡಿದರು. ಆ ಐದು ಮಂದಿ ಅರಸರನ್ನು ಅಂದರೆ ಯೆರೂಸಲೇಮಿನ ಅರಸನನ್ನೂ, ಹೆಬ್ರೋನಿನ ಅರಸನನ್ನೂ ಯರ್ಮೂತಿನ ಅರಸನನ್ನೂ ಲಾಕೀಷಿನ ಅರಸನನ್ನೂ ಎಗ್ಲೋನಿನ ಅರಸನನ್ನೂ ಆ ಗವಿಯೊಳಗಿಂದ ಅವನ ಬಳಿಗೆ ಹೊರಗೆ ತಂದರು.</verse>
				<verse number="24">ಅವರನ್ನು ಯೆಹೋಶುವನ ಬಳಿ ತೆಗೆದುಕೊಂಡು ಬಂದಾಗ, ಯೆಹೋಶುವನು ಇಸ್ರಾಯೇಲರೆಲ್ಲರನ್ನು ಕರೆಸಿ ತನ್ನ ಸಂಗಡ ಬಂದ ಯುದ್ಧಭಟರಾದ ಅಧಿಕಾರಿಗಳಿಗೆ, “ನೀವು ಸಮೀಪಕ್ಕೆ ಬಂದು ನಿಮ್ಮ ಪಾದಗಳನ್ನು ಈ ಅರಸರ ಕೊರಳಿನ ಮೇಲೆ ಇಡಿರಿ,” ಎಂದನು. ಆಗ ಅವರು ಸಮೀಪಕ್ಕೆ ಬಂದು ತಮ್ಮ ಪಾದಗಳನ್ನು ಅವರ ಕೊರಳಿನ ಮೇಲೆ ಇಟ್ಟರು.</verse>
				<verse number="25">ಆಗ ಯೆಹೋಶುವನು ಅವರಿಗೆ, “ಭಯಪಡಬೇಡಿರಿ, ನಿರುತ್ಸಾಹಗೊಳ್ಳಬೇಡಿರಿ, ಬಲಗೊಂಡು ಧೈರ್ಯವಾಗಿರಿ. ಏಕೆಂದರೆ ನೀವು ಯುದ್ಧಮಾಡುವ ನಿಮ್ಮ ಶತ್ರುಗಳೆಲ್ಲರಿಗೂ ಯೆಹೋವ ದೇವರು ಹೀಗೆಯೇ ಮಾಡುವರು,” ಎಂದನು.</verse>
				<verse number="26">ಆ ತರುವಾಯ ಯೆಹೋಶುವನು ಅವರನ್ನು ದಂಡಿಸಿ, ಐದು ಮರಗಳಲ್ಲಿ ತೂಗುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಮರಗಳಲ್ಲಿ ತೂಗಾಡುತ್ತಿದ್ದವು.</verse>
				<verse number="27">ಆದರೆ ಸೂರ್ಯನು ಅಸ್ತಮಿಸುವಾಗ ಯೆಹೋಶುವನು ಆಜ್ಞಾಪಿಸಲು, ಶವವನ್ನು ಮರಗಳಿಂದ ಇಳಿಸಿ ಅವರು ಬಚ್ಚಿಟ್ಟುಕೊಂಡಿದ್ದ ಗವಿಯಲ್ಲಿಯೇ ಅವರನ್ನು ಹಾಕಿ, ಈವರೆಗೂ ಇರುವ ಹಾಗೆ ದೊಡ್ಡ ಕಲ್ಲುಗಳನ್ನು ಅದರ ಬಾಯಿಗೆ ಮುಚ್ಚಿದರು.</verse>
				<verse number="28">ಆ ದಿನದಲ್ಲಿ ಯೆಹೋಶುವನು ಮಕ್ಕೇದ ಊರನ್ನು ಸ್ವಾಧೀನಪಡಿಸಿಕೊಂಡನು. ಅದರ ಅರಸನನ್ನೂ ಜನರನ್ನೂ ಖಡ್ಗಕ್ಕೆ ತುತ್ತಾಗುವಂತೆ ಮಾಡಿದನು. ಅದರಲ್ಲಿರುವ ಎಲ್ಲವನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಸಂಪೂರ್ಣ ನಾಶಮಾಡಿ, ತಾನು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆಯೇ ಮಕ್ಕೇದದ ಅರಸನಿಗೂ ಮಾಡಿದನು.</verse>
				<verse number="29">ಆಗ ಯೆಹೋಶುವನೂ ಅವನ ಸಂಗಡ ಇದ್ದ ಸಮಸ್ತ ಇಸ್ರಾಯೇಲರೆಲ್ಲರೂ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ, ಅದರ ಮೇಲೆ ಯುದ್ಧಮಾಡಿದರು.</verse>
				<verse number="30">ಯೆಹೋವ ದೇವರು ಲಿಬ್ನವನ್ನೂ, ಅದರ ಅರಸನನ್ನೂ ಇಸ್ರಾಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟರು. ಯೆಹೋಶುವನು ಅದನ್ನೂ, ಅದರಲ್ಲಿರುವ ಎಲ್ಲರನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಖಡ್ಗದಿಂದ ಹೊಡೆದು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆ ಅದರ ಅರಸನಿಗೂ ಮಾಡಿದನು.</verse>
				<verse number="31">ಅಲ್ಲಿಂದ ಯೆಹೋಶುವನು ಇಸ್ರಾಯೇಲರ ಸಹಿತವಾಗಿ ಲಿಬ್ನದಿಂದ ಲಾಕೀಷಿಗೆ ಹೋಗಿ, ಅದರ ಎದುರಿಗೆ ಪಾಳೆಯ ಮಾಡಿಕೊಂಡು, ಅದರ ಮೇಲೆ ಯುದ್ಧಮಾಡಿದನು.</verse>
				<verse number="32">ಯೆಹೋವ ದೇವರು ಲಾಕೀಷನ್ನು ಇಸ್ರಾಯೇಲರ ಕೈಗೆ ಒಪ್ಪಿಸಿಕೊಟ್ಟರು. ಅವರು ಅದನ್ನು ಎರಡನೆಯ ದಿವಸದಲ್ಲಿ ಹಿಡಿದು ಲಿಬ್ನಕ್ಕೆ ಮಾಡಿದಂತೆ ಸರಿಯಾಗಿ ಅದನ್ನೂ ಅದರಲ್ಲಿರುವ ಎಲ್ಲರನ್ನು ಖಡ್ಗದಿಂದ ಹೊಡೆದರು.</verse>
				<verse number="33">ಆಗ ಗೆಜೆರಿನ ಅರಸನಾದ ಹೋರಾಮನು ಲಾಕೀಷಿಗೆ ಸಹಾಯಮಾಡಲು ಬಂದನು. ಆದರೆ ಯೆಹೋಶುವನು ಒಬ್ಬರೂ ಉಳಿಯದಂತೆ ಅವನನ್ನೂ, ಅವನ ಜನರನ್ನೂ ಸದೆಬಡಿದನು.</verse>
				<verse number="34">ಯೆಹೋಶುವನೂ, ಅವನ ಸಂಗಡ ಸಮಸ್ತ ಇಸ್ರಾಯೇಲರೂ ಲಾಕೀಷಿನಿಂದ ಎಗ್ಲೋನಿಗೆ ಹೋಗಿ, ಅದಕ್ಕೆದುರಾಗಿ ಪಾಳೆಯ ಮಾಡಿಕೊಂಡು ಅದರ ಮೇಲೆ ಯುದ್ಧಮಾಡಿದರು.</verse>
				<verse number="35">ಅದೇ ದಿನದಲ್ಲಿ ಎಗ್ಲೋನನ್ನು ಹಿಡಿದು, ಅದರ ಜನರನ್ನು ಖಡ್ಗದಿಂದ ಹೊಡೆದರು. ಅವರು ಲಾಕೀಷಿಗೆ ಮಾಡಿದ ಹಾಗೆ ಅದಕ್ಕೆ ಮಾಡಿ, ಅದೇ ದಿನದಲ್ಲಿ ಅದರಲ್ಲಿರುವ ಸಕಲ ಜನರನ್ನು ಸಂಪೂರ್ಣವಾಗಿ ನಾಶಮಾಡಿದರು.</verse>
				<verse number="36">ಅನಂತರ ಯೆಹೋಶುವನು ಸಮಸ್ತ ಇಸ್ರಾಯೇಲರ ಸಂಗಡ ಎಗ್ಲೋನಿನಿಂದ ಹೆಬ್ರೋನಿಗೆ ಹೊರಟುಹೋಗಿ, ಅದರ ಮೇಲೆ ಯುದ್ಧಮಾಡಿದನು.</verse>
				<verse number="37">ಹೆಬ್ರೋನನ್ನು ಹಿಡಿದು ಅದನ್ನೂ, ಅದರ ಅರಸನನ್ನೂ ಅದರ ಸಮಸ್ತ ಊರುಗಳನ್ನೂ ಅವುಗಳಲ್ಲಿರುವ ಸಮಸ್ತ ಜನರನ್ನೂ ಖಡ್ಗದಿಂದ ಸದೆಬಡಿದು ಎಗ್ಲೋನಿಗೆ ಮಾಡಿದ ಹಾಗೆ ಒಬ್ಬರನ್ನೂ ಉಳಿಸದೆ, ಅದನ್ನೂ, ಅದರಲ್ಲಿರುವ ಎಲ್ಲರನ್ನೂ ಸಂಪೂರ್ಣ ನಾಶಮಾಡಿದನು.</verse>
				<verse number="38">ಯೆಹೋಶುವನು ಸಮಸ್ತ ಇಸ್ರಾಯೇಲರ ಕೂಡ ದೆಬೀರಕ್ಕೆ ಹೋಗಿ, ಅದರ ಮೇಲೆ ಯುದ್ಧಮಾಡಿದನು.</verse>
				<verse number="39">ದೆಬೀರನ್ನೂ ಅದರ ಅರಸನನ್ನೂ, ಅದರ ಸಮಸ್ತ ಊರುಗಳನ್ನೂ ಹಿಡಿದು ಅವುಗಳನ್ನು ಖಡ್ಗದಿಂದ ದಾಳಿಮಾಡಿ, ಒಬ್ಬರನ್ನೂ ಉಳಿಸದೆ ಅದರಲ್ಲಿದ್ದ ಎಲ್ಲರನ್ನೂ, ಸಂಪೂರ್ಣ ನಾಶಮಾಡಿದನು. ಹೆಬ್ರೋನಿಗೂ ಲಿಬ್ನಕ್ಕೂ ಅದರ ಅರಸನಿಗೂ ಮಾಡಿದ ಹಾಗೆಯೇ ದೆಬೀರಕ್ಕೂ ಅದರ ಅರಸನಿಗೂ ಮಾಡಿದನು.</verse>
				<verse number="40">ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ, ದಕ್ಷಿಣದ ಪ್ರದೇಶವನ್ನೂ, ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸರನ್ನೂ ಒಬ್ಬರನ್ನೂ ಉಳಿಸದೆ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದನು.</verse>
				<verse number="41">ಯೆಹೋಶುವನು ಕಾದೇಶ್ ಬರ್ನೇಯದಿಂದ ಗಾಜದವರೆಗೂ ಇರುವವರನ್ನೂ, ಗೋಷೆನಿನ ಸಮಸ್ತ ಪ್ರಾಂತವನ್ನೂ ಗಿಬ್ಯೋನಿನವರೆಗೆ ಸೋಲಿಸಿದನು.</verse>
				<verse number="42">ಯೆಹೋಶುವನು ಈ ಸಮಸ್ತ ಅರಸರನ್ನೂ, ಅವರ ರಾಜ್ಯವನ್ನೂ ಏಕಕಾಲದಲ್ಲಿ ವಶಪಡಿಸಿಕೊಂಡನು. ಏಕೆಂದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದರು.</verse>
				<verse number="43">ಅನಂತರ ಯೆಹೋಶುವನು ಇಸ್ರಾಯೇಲರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂದಿರುಗಿ ಬಂದನು.</verse>
			</chapter>
			<chapter number="11">
				<verse number="1">ಹಾಚೋರಿನ ಅರಸನಾದ ಯಾಬೀನನು ಇವುಗಳನ್ನು ಕೇಳಿದಾಗ, ಸಮೀಪ ರಾಜ್ಯಗಳ ಅರಸರಿಗೆ ಒಂದು ಸಂದೇಶವನ್ನು ಕಳುಹಿಸಿದನು: ಎಂದರೆ ಮಾದೋನಿನ ಅರಸನಾದ ಯೋಬಾಬನಿಗೂ ಶಿಮ್ರೋನಿನ ಅರಸನಿಗೂ ಅಕ್ಷಾಫಿನ ಅರಸನಿಗೂ</verse>
				<verse number="2">ಪರ್ವತಗಳ ಉತ್ತರ ದಿಕ್ಕಿನಲ್ಲಿಯೂ ಕಿನ್ನೆರೆತಿಗೆ ದಕ್ಷಿಣಕ್ಕಿರುವ ಬಯಲಿನಲ್ಲಿಯೂ ಕಣಿವೆಗಳಲ್ಲಿ ಮತ್ತು ಪಶ್ಚಿಮದಲ್ಲಿ ದೋರಿನ ಪ್ರಾಂತಗಳಲ್ಲಿ ಇರುವ ಅರಸರಿಗೂ</verse>
				<verse number="3">ಪೂರ್ವ ಪಶ್ಚಿಮಕ್ಕಿರುವ ಕಾನಾನ್ಯರ ಬಳಿಗೂ ಪರ್ವತಗಳಲ್ಲಿರುವ ಅಮೋರಿಯರ, ಹಿತ್ತಿಯರ, ಪೆರಿಜೀಯರ, ಯೆಬೂಸಿಯರ ಬಳಿಗೂ, ಮಿಚ್ಪಾ ದೇಶದಲ್ಲಿ ಹೆರ್ಮೋನ್ ಪರ್ವತದ ಕೆಳಭಾಗದಲ್ಲಿರುವ ಹಿವ್ವಿಯರ ಬಳಿಗೂ ಹೇಳಿ ಕಳುಹಿಸಿದನು.</verse>
				<verse number="4">ಅವರೆಲ್ಲರು ಸಮುದ್ರ ದಡದ ಮರಳಿನ ಹಾಗೆ ಅಸಂಖ್ಯರಾಗಿದ್ದರು. ಅವರು ಬಹು ರಥಗಳೂ ಕುದುರೆಗಳೂ ಸಮೂಹವಾಗಿ ತಮ್ಮ ಎಲ್ಲಾ ಸೈನ್ಯಗಳ ಸಂಗಡ ಹೊರಟರು.</verse>
				<verse number="5">ಈ ಎಲ್ಲಾ ಅರಸರು ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಬಂದು ಒಟ್ಟುಗೂಡಿ ಮೇರೋಮ ಎಂಬ ಜಲಾಶಯದ ಬಳಿಯಲ್ಲಿ ಇಳಿದುಕೊಂಡರು.</verse>
				<verse number="6">ಆಗ ಯೆಹೋವ ದೇವರು ಯೆಹೋಶುವನಿಗೆ, “ಅವರಿಗೆ ಭಯಪಡಬೇಡ, ಏಕೆಂದರೆ ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರೂ ಸಂಹಾರವಾಗುವಂತೆ ಇಸ್ರಾಯೇಲರಿಗೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯ್ದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು,” ಎಂದರು.</verse>
				<verse number="7">ಆಗ ಯೆಹೋಶುವನೂ ಅವನ ಸಂಗಡ ಇದ್ದ ಸೈನಿಕರೆಲ್ಲರೂ ಬಂದು ಫಕ್ಕನೆ ಮೇರೋಮ ಜಲಾಶಯದ ಬಳಿಯಲ್ಲಿ ಅವರ ಮೇಲೆ ದಾಳಿಮಾಡಿದರು.</verse>
				<verse number="8">ಯೆಹೋವ ದೇವರು ಅವರನ್ನು ಇಸ್ರಾಯೇಲರ ಕೈಯಲ್ಲಿ ಒಪ್ಪಿಸಿಕೊಟ್ಟರು. ಇವರು ಅವರನ್ನು ಹೊಡೆದು ದೊಡ್ಡ ಸೀದೋನ್, ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ಮಿಚ್ಪೆಯ ಕಣಿವೆಯವರೆಗೂ ಹಿಂದಟ್ಟಿ, ಅವರಲ್ಲಿ ಒಬ್ಬನನ್ನಾದರೂ ಉಳಿಸದೆ ಎಲ್ಲರನ್ನು ಸಂಹರಿಸಿದರು.</verse>
				<verse number="9">ಯೆಹೋಶುವನು ಯೆಹೋವ ದೇವರ ಅಪ್ಪಣೆಯ ಪ್ರಕಾರವೇ ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯ್ದುಬಿಟ್ಟು, ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟನು.</verse>
				<verse number="10">ಆ ಕಾಲದಲ್ಲಿ ಯೆಹೋಶುವನು ಹಿಂದಿರುಗಿ ಹಾಚೋರನ್ನು ಹಿಡಿದು, ಅದರ ಅರಸನನ್ನು ಖಡ್ಗದಿಂದ ಸಂಹರಿಸಿದನು. ಏಕೆಂದರೆ ಹಾಚೋರು ಮೊದಲು ಆ ರಾಜ್ಯಗಳಿಗೆಲ್ಲಾ ಶಿರಸ್ಸಾಗಿತ್ತು.</verse>
				<verse number="11">ಅವರು ಒಬ್ಬರನ್ನಾದರೂ ಉಳಿಸದೆ, ಅದರಲ್ಲಿದ್ದ ಪ್ರತಿಯೊಬ್ಬರನ್ನೂ ಖಡ್ಗದಿಂದ ಸಂಹರಿಸಿದನು. ಹಾಚೋರನ್ನು ಬೆಂಕಿಯಿಂದ ಸುಟ್ಟುಬಿಟ್ಟನು.</verse>
				<verse number="12">ಇದಲ್ಲದೆ ಯೆಹೋಶುವನು ಆ ಅರಸುಗಳ ಸಮಸ್ತ ಪಟ್ಟಣಗಳನ್ನೂ, ಅವುಗಳ ಸಮಸ್ತ ಅರಸರನ್ನೂ ಹಿಡಿದು ಖಡ್ಗದಿಂದ ದಾಳಿಮಾಡಿ, ಯೆಹೋವ ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದಂತೆ ಅವರನ್ನು ಸಂಪೂರ್ಣ ನಾಶಮಾಡಿಬಿಟ್ಟನು.</verse>
				<verse number="13">ಆದರೆ ದಿನ್ನೆಯ ಮೇಲೆ ನಿಂತಿರುವ ಪಟ್ಟಣಗಳನ್ನೆಲ್ಲಾ ಇಸ್ರಾಯೇಲರು ಸುಟ್ಟು ಬಿಡಲಿಲ್ಲ. ಹಾಚೋರನ್ನು ಮಾತ್ರ ಯೆಹೋಶುವನು ಸುಟ್ಟುಬಿಟ್ಟನು.</verse>
				<verse number="14">ಆ ಪಟ್ಟಣಗಳ ಎಲ್ಲಾ ಕೊಳ್ಳೆಯನ್ನೂ, ಪಶುಪ್ರಾಣಿಗಳನ್ನೆಲ್ಲಾ ಇಸ್ರಾಯೇಲರು ತಮಗೋಸ್ಕರ ಸುಲಿಗೆ ಮಾಡಿಕೊಂಡರು. ಖಡ್ಗದಿಂದ ಜನರನ್ನು ನಾಶಮಾಡಿದರು. ಒಬ್ಬರನ್ನೂ ಅವರು ಉಳಿಸಲಿಲ್ಲ.</verse>
				<verse number="15">ಯೆಹೋವ ದೇವರು ತಮ್ಮ ಸೇವಕನಾದ ಮೋಶೆಗೆ ಹೇಗೆ ಆಜ್ಞಾಪಿಸಿದರೋ, ಹಾಗೆಯೇ ಮೋಶೆಯು ಯೆಹೋಶುವನಿಗೆ ಆಜ್ಞಾಪಿಸಿದನು. ಯೆಹೋಶುವನೂ ಹಾಗೆಯೇ ಮಾಡಿದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದರಲ್ಲಿ ಯೆಹೋಶುವನು ಒಂದನ್ನೂ ಮೀರದೆ ಎಲ್ಲವನ್ನೂ ಮಾಡಿದನು.</verse>
				<verse number="16">ಈ ಪ್ರಕಾರ ಗೋಷೆನ್ ಸೀಮೆ, ಅದರ ಕಣಿವೆ, ಬಯಲು ಪ್ರದೇಶ, ದಕ್ಷಿಣದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವುಗಳೆಲ್ಲಾ ಯೆಹೋಶುವನಿಗೆ ಸ್ವಾಧೀನವಾದವು.</verse>
				<verse number="17">ಯೆಹೋಶುವನು ಸೇಯೀರಿಗೆ ಏರಿಹೋಗುವ ಹಾಲಾಕ್ ಬೆಟ್ಟ ಮೊದಲುಗೊಂಡು ಬಾಲ್ಗಾದಿನ ಮಟ್ಟಿಗೂ ಇರುವ ಲೆಬನೋನಿನ ಕಣಿವೆಯಲ್ಲಿ ಹೆರ್ಮೋನಿನ ಬೆಟ್ಟದ ಕೆಳಗಿರುವ ಎಲ್ಲಾ ದೇಶವನ್ನೂ ಬೆಟ್ಟಗಳನ್ನೂ ದಕ್ಷಿಣ ದೇಶವೆಲ್ಲವನ್ನೂ ತೆಗೆದುಕೊಂಡು ಅವುಗಳ ಅರಸುಗಳೆಲ್ಲರನ್ನೂ ಹಿಡಿದು ಅವರಿಗೆ ಮರಣದಂಡನೆ ವಿಧಿಸಿದನು.</verse>
				<verse number="18">ಯೆಹೋಶುವನು ಬಹಳ ಕಾಲ ಈ ಅರಸುಗಳೆಲ್ಲರ ಸಂಗಡ ಯುದ್ಧ ಮಾಡುತ್ತಿದ್ದನು.</verse>
				<verse number="19">ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರ ಹೊರತಾಗಿ ಇಸ್ರಾಯೇಲರ ಸಂಗಡ ಸಮಾಧಾನ ಮಾಡಿಕೊಂಡ ಬೇರೆ ಒಂದು ಪಟ್ಟಣವಾದರೂ ಇರಲಿಲ್ಲ. ಅವರು ಬೇರೆ ಎಲ್ಲವುಗಳನ್ನು ಯುದ್ಧಮಾಡಿ ತೆಗೆದುಕೊಂಡರು.</verse>
				<verse number="20">ಏಕೆಂದರೆ ಅವರು ಇಸ್ರಾಯೇಲರಿಗೆ ಎದುರಾಗಿ ಯುದ್ಧಮಾಡಲು ಬರುವ ಹಾಗೆ ಅವರ ಹೃದಯವನ್ನು ಯೆಹೋವ ದೇವರು ಕಠಿಣಮಾಡಿದ್ದರು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರಿಗೆ ದಯೆ ತೋರಿಸದೆ, ಅವರನ್ನು ಸಂಹರಿಸಿದರು.</verse>
				<verse number="21">ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ, ದೆಬೀರಿನಲ್ಲಿಯೂ, ಅನಾಬಿನಲ್ಲಿಯೂ, ಯೆಹೂದದ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲ್ ಪ್ರಾಂತದ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯರನ್ನು ಕಡಿದುಬಿಟ್ಟು, ಅವರನ್ನೂ, ಅವರ ಪಟ್ಟಣಗಳನ್ನೂ ಪೂರ್ಣವಾಗಿ ನಾಶಮಾಡಿದನು.</verse>
				<verse number="22">ಅನಾಕ್ಯರು ಇಸ್ರಾಯೇಲರ ದೇಶದಲ್ಲಿ ಒಬ್ಬರೂ ಉಳಿಯಲಿಲ್ಲ. ಗಾಜದಲ್ಲಿಯೂ, ಗತ್‌ನಲ್ಲಿಯೂ, ಅಷ್ಡೋದಿನಲ್ಲಿಯೂ ಮಾತ್ರ ಕೆಲವರು ಉಳಿದರು.</verse>
				<verse number="23">ಹೀಗೆ ಯೆಹೋಶುವನು ದೇಶವನ್ನೆಲ್ಲಾ ಯೆಹೋವ ದೇವರು ಮೋಶೆಗೆ ಹೇಳಿದ ಪ್ರಕಾರವೇ ಸ್ವಾಧೀನಮಾಡಿಕೊಂಡನು. ಅದನ್ನು ಇಸ್ರಾಯೇಲರಿಗೆ ಅವರ ಗೋತ್ರಗಳ ಭಾಗಗಳಿಗನುಸಾರ ಬಾಧ್ಯತೆಯಾಗಿ ಕೊಟ್ಟನು. ಆಗ ದೇಶವು ಯುದ್ಧವಿಲ್ಲದೆ ವಿಶ್ರಮಿಸಿಕೊಂಡಿತು.</verse>
			</chapter>
			<chapter number="12">
				<verse number="1">ಇಸ್ರಾಯೇಲರು ಯೊರ್ದನ್ ನದಿಯ ಆಚೆ ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಅರ್ನೋನ್ ಕಣಿವೆಯಿಂದ ಹೆರ್ಮೋನ್ ಬೆಟ್ಟದವರೆಗೂ ಅರಾಬಾ ಎಲ್ಲಾ ಪೂರ್ವ ಭಾಗಗಳನ್ನು ಒಳಗೊಂಡಂತೆ ಭೂಪ್ರದೇಶವನ್ನು ಸ್ವಾಧೀನ ಮಾಡಿಸಿಕೊಂಡ ದೇಶಗಳ ಅರಸರು ಯಾರಾರೆಂದರೆ:</verse>
				<verse number="2">ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನ್ ಎಂಬವನು. ಅವನು ಅರ್ನೋನ್ ಕಣಿವೆಯ ಮಧ್ಯಭಾಗದ ದಾರಿಯ ಬಳಿಯಲ್ಲಿ ಇರುವ ಅರೋಯೇರ್ ನಗರದಿಂದ, ಅರ್ಧ ಗಿಲ್ಯಾದಿನಿಂದಲೂ ಅಮ್ಮೋನಿಯರ ಮೇರೆಯಾದ ಯಬ್ಬೋಕ್ ನದಿಯವರೆಗೆ ಆಳುತ್ತಿದ್ದನು.</verse>
				<verse number="3">ಯೊರ್ದನ್ ನದಿಯ ಪೂರ್ವದಲ್ಲಿ ಕಿನ್ನೆರೆತ್ ಸಮುದ್ರದಿಂದ ಲವಣ ಸಮುದ್ರವೆನಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್ ಯೆಷೀಮೋತನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ತಗ್ಗಾದ ಪ್ರದೇಶವು ಸಹ ಅವನ ರಾಜ್ಯವಾಗಿತ್ತು.</verse>
				<verse number="4">ಅಷ್ಟಾರೋತ್ ಮತ್ತು ಎದ್ರೈ ಎಂಬ ಊರುಗಳಲ್ಲಿ ವಾಸಮಾಡಿದ್ದ ರೆಫಾಯರ ವಂಶಸ್ಥನೂ ಬಾಷಾನಿನ ಅರಸನೂ ಆದ ಓಗನು ಎರಡನೆಯವನು.</verse>
				<verse number="5">ಅವನು ಹೆರ್ಮೋನ್ ಬೆಟ್ಟವನ್ನೂ ಸಲ್ಕಾ ನಗರವನ್ನೂ ಗೆಷೂರಿಯರ ಮತ್ತು ಮಾಕಾತೀಯರ ಮೇರೆಯವರೆಗೂ ಇದ್ದ ಇಡೀ ಬಾಷಾನ್ ನಾಡನ್ನು ಆಳುತ್ತಿದ್ದನು. ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯವರೆಗಿದ್ದ ಗಿಲ್ಯಾದಿನ ಅರ್ಧ ಪ್ರಾಂತ್ಯದವರೆಗೂ ಅವನು ಆಳಿಕೊಂಡಿದ್ದನು.</verse>
				<verse number="6">ಯೆಹೋವ ದೇವರ ಸೇವಕನಾದ ಮೋಶೆಯೂ ಇಸ್ರಾಯೇಲರೂ ಅವರನ್ನು ಸೋಲಿಸಿ, ಅವರ ರಾಜ್ಯವನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆ ಕುಲದ ಅರ್ಧ ಗೋತ್ರದವರಿಗೂ ಸೊತ್ತಾಗಿ ಕೊಟ್ಟನು.</verse>
				<verse number="7">ಯೆಹೋಶುವನು ಇಸ್ರಾಯೇಲರ ಸಮೇತ ಯೊರ್ದನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಮಲೆನಾಡಿನ ಪ್ರದೇಶದ ಅರಸರನ್ನೂ,</verse>
				<verse number="8">ಇಳಿಜಾರಿನ ಪ್ರದೇಶ, ಬೆಟ್ಟದ ಪ್ರದೇಶ, ತಪ್ಪಲು ಪ್ರದೇಶ, ಮರುಭೂಮಿ ಹಾಗೂ ದಕ್ಷಿಣ ಪ್ರಾಂತ್ಯ ಇವುಗಳನ್ನು ಆಳುತ್ತಿದ್ದ ಹಿತ್ತಿಯ, ಅಮೋರಿಯ, ಕಾನಾನ್, ಪೆರಿಜೀಯ, ಹಿವ್ವಿಯ ಹಾಗೂ ಯೆಬೂಸಿಯ ಅರಸರನ್ನೂ ಸೋಲಿಸಿ, ಅವರ ನಾಡುಗಳನ್ನು ಇಸ್ರಾಯೇಲ್ ಕುಲಗಳಿಗೆ ಶಾಶ್ವತ ಸೊತ್ತಾಗಿ ಕೊಟ್ಟನು. ಆ ಅರಸರ ಪಟ್ಟಿ ಹೀಗಿದೆ:</verse>
				<verse number="9">ಯೆರಿಕೋವಿನ ಅರಸನು ಬೇತೇಲ್ ಬಳಿಯಲ್ಲಿರುವ ಆಯಿ ಪಟ್ಟಣದ ಅರಸನು.</verse>
				<verse number="10">ಯೆರೂಸಲೇಮಿನ ಅರಸನು. ಹೆಬ್ರೋನಿನ ಅರಸನು.</verse>
				<verse number="11">ಯರ್ಮೂತಿನ ಅರಸನು. ಲಾಕೀಷಿನ ಅರಸನು.</verse>
				<verse number="12">ಎಗ್ಲೋನಿನ ಅರಸನು. ಗೆಜೆರಿನ ಅರಸನು.</verse>
				<verse number="13">ದೆಬೀರಿನ ಅರಸನು. ಗೆದೆರಿನ ಅರಸನು.</verse>
				<verse number="14">ಹೊರ್ಮಾದ ಅರಸನು. ಅರಾದಿನ ಅರಸನು.</verse>
				<verse number="15">ಲಿಬ್ನದ ಅರಸನು. ಅದುಲ್ಲಾಮಿನ ಅರಸನು.</verse>
				<verse number="16">ಮಕ್ಕೇದದ ಅರಸನು. ಬೇತೇಲಿನ ಅರಸನು.</verse>
				<verse number="17">ತಪ್ಪೂಹದ ಅರಸನು. ಹೇಫೆರಿನ ಅರಸನು.</verse>
				<verse number="18">ಅಫೇಕದ ಅರಸನು. ಲಷ್ಷಾರೋನಿನ ಅರಸನು.</verse>
				<verse number="19">ಮಾದೋನಿನ ಅರಸನು. ಹಾಚೋರಿನ ಅರಸನು.</verse>
				<verse number="20">ಶಿಮ್ರೋನ್ ಮೆರೋನಿನ ಅರಸನು. ಅಕ್ಷಾಫಿನ ಅರಸನು.</verse>
				<verse number="21">ತಾನಕದ ಅರಸನು. ಮೆಗಿದ್ದೋವಿನ ಅರಸನು.</verse>
				<verse number="22">ಕೆದೆಷಿನ ಅರಸನು. ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು.</verse>
				<verse number="23">ನೆಪೊತ್ ದೋರ್ ಪ್ರಾಂತದ ದೋರಿನ ಅರಸನು. ಗಿಲ್ಗಾಲದಲ್ಲಿಯ ಗೊಯ್ಮದ ಅರಸನು.</verse>
				<verse number="24">ತಿರ್ಚದ ಅರಸನು. ಹೀಗೆ ಒಟ್ಟು ಮೂವತ್ತೊಂದು ಮಂದಿ ಅರಸರು ಅಪಜಯಗೊಂಡರು.</verse>
			</chapter>
			<chapter number="13">
				<verse number="1">ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವ ದೇವರು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನ ಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.</verse>
				<verse number="2">“ಅವು ಯಾವುವೆಂದರೆ: “ಫಿಲಿಷ್ಟಿಯರ ಮತ್ತು ಗೆಷೂರ್ಯರ ದೇಶವೆಲ್ಲಾ ಅಂದರೆ,</verse>
				<verse number="3">ಈಜಿಪ್ಟಿಗೆ ಎದುರಾದ ಶೀಹೋರ್ ನದಿಯಿಂದ ಕಾನಾನ್ಯರಿಗೆ ಸೇರಿದ ಉತ್ತರ ಮೇರೆಯಾದ ಎಕ್ರೋನಿನವರೆಗೂ ಅಂದರೆ, ಗಾಜಾ, ಅಷ್ಡೋದ್, ಅಷ್ಕೆಲೋನ್, ಗಾತ್, ಎಕ್ರೋನ್ ಎಂಬುವ ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಪ್ರಾಂತ್ಯ ದಕ್ಷಿಣ ಪ್ರಾಂತ್ಯದಲ್ಲಿದ್ದ ಅವ್ವೀಯರ ಸೀಮೆ;</verse>
				<verse number="4">ಸೀದೋನ್ಯರ ಆರಾ ಪ್ರದೇಶದಿಂದ ಅಫೇಕ್ ಮತ್ತು ಅಮೋರಿಯರ ಮೇರೆಯವರೆಗೆ ಕಾನಾನ್ಯರ ಎಲ್ಲಾ ದೇಶವು,</verse>
				<verse number="5">ಅದರೊಂದಿಗೆ ಗೆಬಾಲ್ಯರ ಪ್ರಾಂತ್ಯ, ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಲ್ಗಾದಿನಿಂದ ಹಮಾತಿನ ದಾರಿಯವರೆಗೂ ಇರುವ ಲೆಬನೋನಿನ ಪೂರ್ವ ಪ್ರದೇಶ.</verse>
				<verse number="6">“ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗೂ ಬೆಟ್ಟದ ದೇಶದ ಎಲ್ಲಾ ನಿವಾಸಿಗಳನ್ನೂ ಎಲ್ಲಾ ಸೀದೋನ್ಯರನ್ನೂ ನಾನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಡುವೆನು. ಆದರೆ ನಾನು ನಿನಗೆ ಹೇಳಿದ ಹಾಗೆಯೇ ನೀನು ಚೀಟುಗಳನ್ನು ಹಾಕಿ, ಇಸ್ರಾಯೇಲರಿಗೆ ಸೊತ್ತಾಗಿ ಪಾಲು ಕೊಡಬೇಕು.</verse>
				<verse number="7">ಈಗ ಈ ದೇಶವನ್ನು ಒಂಬತ್ತು ಗೋತ್ರಗಳಿಗೂ ಮನಸ್ಸೆ ಕುಲದ ಅರ್ಧ ಗೋತ್ರಕ್ಕೆ ಸೊತ್ತಾಗಿ ಪಾಲು ಮಾಡಿಕೊಡು,” ಎಂದು ಹೇಳಿದರು.</verse>
				<verse number="8">ಮನಸ್ಸೆ ಕುಲದ ಉಳಿದ ಅರ್ಧ ಗೋತ್ರದವರೂ ರೂಬೇನ್ಯರೂ ಗಾದ್ಯರೂ ತಮ್ಮ ಸೊತ್ತನ್ನು ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿ ಆಚೆ ಸೂರ್ಯೋದಯದ ದಿಕ್ಕಿನಲ್ಲಿ ಅವರಿಗೆ ಕೊಡಬೇಕೆಂದು ನಿರ್ಣಯಿಸಿದ ಸ್ಥಳಗಳು ಅವರಿಗೆ ಕೊಡಲಾದವು. ಅವುಗಳು ಯಾವುವೆಂದರೆ:</verse>
				<verse number="9">ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣ ಮತ್ತು ಅದೇ ಕಣಿವೆಯಲ್ಲಿ ಇದ್ದ ಪಟ್ಟಣ ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬಾದ ಸಮನಾದ ಭೂಮಿಯೂ</verse>
				<verse number="10">ಹೆಷ್ಬೋನಿನಲ್ಲಿ ಆಳಿದ ಅಮೋರಿಯರ ಅರಸ ಸೀಹೋನನಿಗೆ ಸೇರಿದ ಅಮ್ಮೋನಿಯರ ಮೇರೆಯವರೆಗೂ ಇದ್ದ ಸಕಲ ಪಟ್ಟಣಗಳು.</verse>
				<verse number="11">ಅದರೊಂದಿಗೆ ಗಿಲ್ಯಾದ್, ಗೆಷೂರ್ಯರ, ಮಾಕಾತೀಯರ ಮೇರೆಯೂ ಹೆರ್ಮೋನ್ ಪರ್ವತವೆಲ್ಲವೂ ಸಲೆಕಾವರೆಗೆ ಇರುವ ಇಡೀ ಬಾಷಾನ್ ಪೂರ್ತಿಯಾಗಿ.</verse>
				<verse number="12">ಅಂದರೆ, ಬಾಷಾನಿನಲ್ಲಿ ಅಷ್ಟಾರೋತ್, ಎದ್ರೈ ಎಂಬ ಊರುಗಳಲ್ಲಿ ಆಳಿದ ರೆಫಾಯರ ವಂಶಸ್ಥನಾದ ಓಗನ ಸಮಸ್ತ ರಾಜ್ಯವೆಲ್ಲಾ ಇವುಗಳೇ. ಮೋಶೆಯು ಇವೆಲ್ಲವುಗಳನ್ನು ಜಯಿಸಿ, ಅವರ ದೇಶಗಳನ್ನು ಸ್ವಾಧೀನಮಾಡಿಕೊಂಡಿದ್ದನು.</verse>
				<verse number="13">ಆದಾಗ್ಯೂ ಇಸ್ರಾಯೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿಬಿಡಲಿಲ್ಲ. ಏಕೆಂದರೆ ಗೆಷೂರ್ಯರೂ ಮಾಕಾತೀಯರೂ ಈ ದಿನದವರೆಗೆ ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿದ್ದಾರೆ.</verse>
				<verse number="14">ಆದರೆ ಮೋಶೆಯು ಲೇವಿಯರ ಗೋತ್ರಕ್ಕೆ ಮಾತ್ರ ಯಾವ ಸೊತ್ತನ್ನೂ ಕೊಡಲಿಲ್ಲ. ಏಕೆಂದರೆ ಅವನು ಅವರಿಗೆ ಹೇಳಿದ ಪ್ರಕಾರ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಿದ್ದರಿಂದ, ಇಸ್ರಾಯೇಲಿನ ದೇವರೇ ಅವರ ಸೊತ್ತು.</verse>
				<verse number="15">ಮೋಶೆಯು ರೂಬೇನನ ಮಕ್ಕಳ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಕೊಟ್ಟ ಸೊತ್ತು ಇವು:</verse>
				<verse number="16">ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣವು ಮೊದಲುಗೊಂಡು, ಮೇದೆಬಾದ ಬಳಿಯಲ್ಲಿರುವ ಸಕಲ ಸಮನಾದ ಭೂಮಿಯೂ,</verse>
				<verse number="17">ಸಮನಾದ ಭೂಮಿಯಲ್ಲಿರುವ ಹೆಷ್ಬೋನ್ ಪಟ್ಟಣವೂ ಅದರ ಎಲ್ಲಾ ಪಟ್ಟಣಗಳಾದ ದೀಬೋನ್, ಬಾಮೋತ್ ಬಾಳ್, ಬೇತ್ ಬಾಳ್ ಮೆಯೋನ್,</verse>
				<verse number="18">ಯಹಚ, ಕೆದೇಮೋತ್, ಮೇಫಾತ್,</verse>
				<verse number="19">ಕಿರ್ಯಾತಯಿಮ್, ಸಿಬ್ಮಾ, ತಗ್ಗಿನ ಬೆಟ್ಟದಲ್ಲಿರುವ ಚೆರೆತ್ ಶಹರ್,</verse>
				<verse number="20">ಬೇತ್ ಪೆಗೋರ್ ಎಂಬ ಪಟ್ಟಣಗಳೂ ಪಿಸ್ಗಾದ ಕೆಳಗಡೆ ಇರುವ ಸೀಮೆ, ಬೇತ್ ಯೆಷೀಮೋತ್,</verse>
				<verse number="21">ಸಮನಾದ ಭೂಮಿಯ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳಿದ ಸೀಹೋನೆಂಬ ಅಮೋರಿಯರ ಅರಸನ ರಾಜ್ಯವೆಲ್ಲವೂ ಅವರ ಮೇರೆಗೊಳಗಾದವು. ಮೋಶೆಯು ಅವನನ್ನೂ ದೇಶದಲ್ಲಿ ಅವನ ಅಧಿಪತಿಗಳಾದಂಥ ಮಿದ್ಯಾನಿನ ಪ್ರಧಾನರಾದ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬವರನ್ನೂ ಸೆದೆಬಡಿದನು.</verse>
				<verse number="22">ಇದಲ್ಲದೆ ಇಸ್ರಾಯೇಲರು ಸಂಹರಿಸಿದ ಇತರರ ಸಂಗಡ ಬೆಯೋರನ ಮಗನಾದ ಬಿಳಾಮನೆಂಬ ಕಣಿ ಹೇಳುವವನನ್ನು ಖಡ್ಗದಿಂದ ಕೊಂದುಹಾಕಿದರು.</verse>
				<verse number="23">ಯೊರ್ದನ್ ನದಿಯು ರೂಬೇನ್ ಗೋತ್ರಗಳ ಮೇರೆಯಾಗಿತ್ತು. ಈ ಪಟ್ಟಣಗಳೂ ಇವುಗಳ ಗ್ರಾಮಗಳೂ ರೂಬೇನನ ಮಕ್ಕಳಿಗೆ ಅವರ ಗೋತ್ರಗಳ ಪ್ರಕಾರ ದೊರಕಿದ ಸೊತ್ತು.</verse>
				<verse number="24">ಮೋಶೆಯು ಗಾದನ ಗೋತ್ರಗಳಿಗೆ ಅವರ ಕುಟುಂಬಗಳ ಪ್ರಕಾರ ಕೊಟ್ಟ ಸೊತ್ತು ಇವು:</verse>
				<verse number="25">ಯಜ್ಜೇರ್ ಪ್ರದೇಶ, ಗಿಲ್ಯಾದಿನ ಸಮಸ್ತ ಪಟ್ಟಣಗಳೂ ರಬ್ಬಾ ಊರಿನ ಎದುರಾಗಿರುವ ಅರೋಯೇರ್ ಪಟ್ಟಣವರೆಗೂ ಇರುವ ಅಮ್ಮೋನಿಯರ ಅರ್ಧ ದೇಶವು.</verse>
				<verse number="26">ಹೆಷ್ಬೋನಿನಿಂದ ರಾಮತ್ ಮಿಚ್ಪೆ, ಬೆಟೊನೀಮ್ ಎಂಬ ಊರುಗಳವರೆಗೂ ಮಹನಯಿಮಿನಿಂದ ದೆಬೀರ್ ಮೇರೆಯವರೆಗೂ ಇರುವ ದೇಶವು.</verse>
				<verse number="27">ತಗ್ಗಿನಲ್ಲಿರುವ ಬೇತ್‌ಹಾರಾಮ್, ಬೇತ್ ನಿಮ್ರಾ, ಸುಕ್ಕೋತ್, ಚಾಪೋನ್ ಎಂಬ ಪಟ್ಟಣಗಳು ಹೆಷ್ಬೋನಿನ ಅರಸನಾದ ಸೀಹೋನನ ಉಳಿದ ರಾಜ್ಯವೂ ಯೊರ್ದನ್ ನದಿ ತೀರವಾಗಿ ಕಿನ್ನೆರೆತ್ ಸಮುದ್ರದ ಪರ್ಯಂತರಕ್ಕೂ ಇರುವ ದೇಶವು ಅವರ ಮೇರೆಗೆ ಒಳಗಾದವು.</verse>
				<verse number="28">ಈ ಪಟ್ಟಣಗಳೂ, ಇವುಗಳ ಗ್ರಾಮಗಳೂ ಗಾದ್ಯರಿಗೆ ಅವರ ಕುಟುಂಬಗಳ ಪ್ರಕಾರ ಸೊತ್ತಾಗಿವೆ.</verse>
				<verse number="29">ಇದಲ್ಲದೆ ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಅವರ ಕುಟುಂಬದ ಪ್ರಕಾರ ಕೊಟ್ಟ ಸೊತ್ತು ಇವು:</verse>
				<verse number="30">ಮಹನಯಿಮಿನಿಂದ ಬಾಷಾನಿನ ಅರಸನಾದ ಓಗನ ಸಮಸ್ತ ರಾಜ್ಯವಾಗಿರುವ ಬಾಷಾನೆಲ್ಲವೂ, ಬಾಷಾನಿನಲ್ಲಿರುವ ಯಾಯೀರನ ಸಮಸ್ತ ಊರುಗಳಾದ ಅರವತ್ತು ಪಟ್ಟಣಗಳೂ ಅವರ ಮೇರೆಗೆ ಒಳಗಾದವು.</verse>
				<verse number="31">ಗಿಲ್ಯಾದಿನ ಅರ್ಧ ಭಾಗ, ಬಾಷಾನಿನಲ್ಲಿರುವ ಓಗ್ ರಾಜನ ಪಟ್ಟಣಗಳಾದ ಅಷ್ಟಾರೋತ್, ಎದ್ರೈ, ಇವೆಲ್ಲವೂ ಮನಸ್ಸೆಯ ಮಗ ಮಾಕೀರನ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಮಾಕೀರನ ಮಕ್ಕಳಲ್ಲಿ ಅರ್ಧ ಜನರಿಗೆ ಕೊಟ್ಟನು.</verse>
				<verse number="32">ಹೀಗೆಯೇ ಮೋಶೆಯು ಯೊರ್ದನ್ ನದಿಗೆ ಆಚೆ ಯೆರಿಕೋವಿನ ಪೂರ್ವದಿಕ್ಕಿನಲ್ಲಿರುವ ಮೋವಾಬ್ಯರ ಬಯಲುಗಳಲ್ಲಿ ಬಾಧ್ಯತೆಯಾಗಿ ಹಂಚಿದ ದೇಶಗಳು ಇವೆ.</verse>
				<verse number="33">ಆದರೆ ಲೇವಿಯರ ಗೋತ್ರಕ್ಕೆ ಮೋಶೆಯು ಯಾವ ಸೊತ್ತನ್ನೂ ಕೊಡಲಿಲ್ಲ. ಏಕೆಂದರೆ ದೇವರು ಅವರಿಗೆ ಹೇಳಿದ ಪ್ರಕಾರ ಇಸ್ರಾಯೇಲರ ದೇವರಾದ ಯೆಹೋವ ದೇವರೇ ಅವರ ಸೊತ್ತು.</verse>
			</chapter>
			<chapter number="14">
				<verse number="1">ಯಾಜಕನಾದ ಎಲಿಯಾಜರನೂ ನೂನನ ಮಗನಾದ ಯೆಹೋಶುವನೂ ಇಸ್ರಾಯೇಲರ ಗೋತ್ರಗಳ ಮುಖ್ಯಸ್ಥರೂ ಜನರಿಗೆ ಸೊತ್ತಾಗಿ ಕೊಡಲು ಕಾನಾನ್ ದೇಶದಲ್ಲಿ ಇಸ್ರಾಯೇಲರು ಬಾಧ್ಯವಾಗಿ ಪ್ರದೇಶಗಳನ್ನು ಹೊಂದಿದರು.</verse>
				<verse number="2">ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಹಾಗೆಯೇ ಒಂಬತ್ತುವರೆ ಗೋತ್ರಗಳಿಗೆ ಚೀಟುಗಳನ್ನು ಹಾಕಿ ಸೊತ್ತಾಗಿ ಪಾಲು ಹಂಚಿದರು.</verse>
				<verse number="3">ಏಕೆಂದರೆ ಮೋಶೆಯು ಯೊರ್ದನ್ ನದಿ ಆಚೆ ಎರಡೂವರೆ ಗೋತ್ರಗಳಿಗೆ ಸೊತ್ತನ್ನು ಕೊಟ್ಟಿದ್ದನು. ಆದರೆ ಲೇವಿಯರಿಗೆ ಯಾವ ಸೊತ್ತನ್ನೂ ಕೊಡಲಿಲ್ಲ,</verse>
				<verse number="4">ಯೋಸೇಫನ ಮಕ್ಕಳಾದ ಮನಸ್ಸೆಯೂ, ಎಫ್ರಾಯೀಮನೂ ಎರಡು ಗೋತ್ರಗಳಾಗಿದ್ದರು. ಲೇವಿಯರಿಗೆ ದೇಶದಲ್ಲಿ ಪಾಲುಕೊಡಲಿಲ್ಲ. ಆದರೆ ವಾಸಮಾಡುವ ಪಟ್ಟಣಗಳನ್ನೂ, ದನಕುರಿಗಳಿಗೋಸ್ಕರವಾಗಿ ಹುಲ್ಲುಗಾವಲುಗಳನ್ನೂ, ಪ್ರಾಂತಗಳನ್ನೂ ಮಾಡಿಕೊಟ್ಟರು.</verse>
				<verse number="5">ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರಮಾಡಿ, ದೇಶವನ್ನು ಹಂಚಿಕೊಡಲಾಯಿತು.</verse>
				<verse number="6">ಯೆಹೂದದ ಗೋತ್ರದವರು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಬಂದರು. ಆಗ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಅವನಿಗೆ, “ಕಾದೇಶ್ ಬರ್ನೇಯದಲ್ಲಿ ಯೆಹೋವ ದೇವರು ನನ್ನನ್ನೂ, ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ.</verse>
				<verse number="7">ದೇಶವನ್ನು ಸಂಚರಿಸಿ ನೋಡಲು ಯೆಹೋವ ದೇವರ ಸೇವಕನಾದ ಮೋಶೆಯು ನನ್ನನ್ನು ಕಾದೇಶ್ ಬರ್ನೇಯದಿಂದ ಕಳುಹಿಸುವಾಗ ನಾನು ನಾಲ್ವತ್ತು ವರ್ಷ ಪ್ರಾಯದವನಾಗಿದ್ದೆನು. ನನ್ನ ಮನಸ್ಸಿಗೆ ಬಂದಿದ್ದ ವರದಿಯನ್ನು ತಂದು ತಿಳಿಸಿದೆನು.</verse>
				<verse number="8">ಆದರೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದ ಹಿಂಬಾಲಿಸಿದೆನು.</verse>
				<verse number="9">ಆ ದಿವಸದಲ್ಲಿ ಮೋಶೆಯು ನನಗೆ, ‘ನೀನು ನನ್ನ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದ ಹಿಂಬಾಲಿಸಿದ ಕಾರಣ, ನಿನ್ನ ಪಾದ ಮೆಟ್ಟಿದ ದೇಶವು ನಿನಗೂ, ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವುದು,’ ಎಂದು ಆಣೆ ಇಟ್ಟು ಹೇಳಿದನು.</verse>
				<verse number="10">“ಈಗ ಯೆಹೋವ ದೇವರು ಮೋಶೆಗೆ ಈ ವಾಕ್ಯವನ್ನು ಹೇಳಿದಂದಿನಿಂದ ಇಸ್ರಾಯೇಲರು ಮರುಭೂಮಿಯಲ್ಲಿ ಸಂಚರಿಸಿದ ನಾಲ್ವತ್ತೈದು ವರ್ಷ ಯೆಹೋವ ದೇವರು ಹೇಳಿದ ಹಾಗೆಯೇ ನನ್ನನ್ನು ಜೀವದಿಂದ ಇಟ್ಟಿದ್ದಾರೆ. ಈಗ ನಾನು ಇಂದು ಎಂಬತ್ತೈದು ವರ್ಷ ಪ್ರಾಯದವನಾಗಿದ್ದೇನೆ.</verse>
				<verse number="11">ಮೋಶೆ ನನ್ನನ್ನು ಕಳುಹಿಸಿದ ದಿವಸದಲ್ಲಿ ನಾನು ಹೇಗೆ ಬಲಿಷ್ಠನಾಗಿ ಇದ್ದೆನೋ, ಹಾಗೆಯೇ ಈಗಲೂ ಬಲಿಷ್ಠನಾಗಿದ್ದೇನೆ. ನಾನು ಯುದ್ಧ ಮಾಡುವದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವದಕ್ಕೂ ನನಗೆ ಆಗ ಇದ್ದ ಶಕ್ತಿಯ ಹಾಗೆಯೇ ಈಗಲೂ ಶಕ್ತಿಯುಳ್ಳವನಾಗಿದ್ದೇನೆ.</verse>
				<verse number="12">ಆದ್ದರಿಂದ ಯೆಹೋವ ದೇವರು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಏಕೆಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ, ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿವಸದಲ್ಲಿ ಕೇಳಿದ್ದಿ. ಯೆಹೋವ ದೇವರು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಯೆಹೋವ ದೇವರು ನನಗೆ ಸಹಾಯ ಮಾಡುವರೆಂದು ನಂಬಿಕೊಂಡಿದ್ದೇನೆ,” ಎಂದನು.</verse>
				<verse number="13">ಆಗ ಯೆಹೋಶುವನು ಯೆಫುನ್ನೆಯ ಮಗ ಕಾಲೇಬನನ್ನು ಆಶೀರ್ವದಿಸಿ, ಅವನಿಗೆ ಹೆಬ್ರೋನನ್ನು ಸೊತ್ತಾಗಿ ಕೊಟ್ಟನು.</verse>
				<verse number="14">ಹೀಗೆಯೇ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದ ಹಿಂಬಾಲಿಸಿದ ಕಾರಣ, ಹೆಬ್ರೋನು ಇಂದಿನವರೆಗೂ ಅವನ ಸೊತ್ತಾಗಿದೆ.</verse>
				<verse number="15">ಹೆಬ್ರೋನಿನ ಮೊದಲಿನ ಹೆಸರು ಕಿರ್ಯತ್ ಅರ್ಬ. “ಅರ್ಬ” ಎಂಬುವವನು ಅನಾಕ್ಯರಲ್ಲಿ ಪ್ರಮುಖನಾಗಿದ್ದನು. ದೇಶವು ಯುದ್ಧವಿಲ್ಲದೆ ಶಾಂತವಾಗಿತ್ತು.</verse>
			</chapter>
			<chapter number="15">
				<verse number="1">ಯೆಹೂದ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ವಿಭಾಗಿಸಿದ ಮೇರೆ ಯಾವುದೆಂದರೆ: ಕಟ್ಟಕಡೆಗಿರುವ ದಕ್ಷಿಣ ಕಡೆಗೆ ಎದೋಮಿನ ಮೇರೆಯಾದ ಚಿನ್ ಮರುಭೂಮಿಯ ದಕ್ಷಿಣ ಭಾಗ.</verse>
				<verse number="2">ಲವಣ ಸಮುದ್ರದ ಕಡೆಯಲ್ಲಿ ದಕ್ಷಿಣ ಕಡೆಗಿರುವ ಕೊನೆಯಿಂದ,</verse>
				<verse number="3">ಅಕ್ರಬ್ಬೀಮ್ ಎಂಬ ಕಣಿವೆಯ ದಕ್ಷಿಣಮಾರ್ಗವಾಗಿ ಚಿನಿಗೆ ಹೋಗುವದು. ಅಲ್ಲಿಂದ ದಕ್ಷಿಣದಲ್ಲಿರುವ ಕಾದೇಶ್ ಬರ್ನೇಯಕ್ಕೂ ಅಲ್ಲಿಂದ ಹೆಚ್ರೋನನಿಂದ ಅದ್ದಾರವರೆಗೂ ಮುಂದುವರೆದು ಅಲ್ಲಿ ತಿರಿಗಿಕೊಂಡು ಕರ್ಕದವರೆಗೂ ವಿಸ್ತರಿಸಿಕೊಂಡಿತ್ತು,</verse>
				<verse number="4">ಅಲ್ಲಿಂದ ಈಜಿಪ್ಟನ ಅಚ್ಮೋನ ನದಿಗೆ ಬಂದು ಮೆಡಿಟೆರಿಯನ್ ಸಮುದ್ರದವರೆಗೆ ಹೋಗಿ ಸೇರುವುದು. ಇದೇ ಯೆಹೂದದ ದಕ್ಷಿಣ ಮೇರೆ.</verse>
				<verse number="5">ಅದರ ಪೂರ್ವದ ಮೇರೆ, ಯೊರ್ದನ್ ನದಿ ಕೊನೆಯ ಮಟ್ಟಿಗಿರುವ ಲವಣ ಸಮುದ್ರವು. ಉತ್ತರ ಕಡೆಗೆ ಯೊರ್ದನ್ ನದಿ ಮೇರೆ ಕೊನೆ ಹತ್ತಿರ ಸಮುದ್ರದ ಮುಖದ್ವಾರದಿಂದ ಇತ್ತು;</verse>
				<verse number="6">ಅಲ್ಲಿಂದ ಬೇತ್ ಹೊಗ್ಲಾಕ್ಕೂ, ಅಲ್ಲಿಂದ ಉತ್ತರಕ್ಕಿರುವ ಬೇತ್ ಅರಾಬನ್ನು ದಾಟಿ, ರೂಬೇನನ ಮಗ ಬೋಹನನ ಬಂಡೆಯ ವರೆಗೆ ಇತ್ತು.</verse>
				<verse number="7">ಅಲ್ಲಿಂದ ಆಕೋರ್ ತಗ್ಗನ್ನು ಬಿಟ್ಟು ದೆಬೀರಿಗೂ ಉತ್ತರಕ್ಕೆ ನದಿಗೆ ತಿರುಗಿಕೊಂಡು ದಕ್ಷಿಣದಲ್ಲಿರುವ ಅದುಮೀಮಿನ ದಿಬ್ಬೆಗೆ ಎದುರಾಗಿರುವ ಗಿಲ್ಗಾಲಿಗೂ, ಅಲ್ಲಿಂದ ಏನ್ ಷೆಮೆಷ್ ಎಂಬ ಬುಗ್ಗೆಗೂ, ಅಲ್ಲಿಂದ ಏನ್ ರೋಗೆಲ್‌ವರೆಗೂ ಇತ್ತು.</verse>
				<verse number="8">ಅಲ್ಲಿಂದ ಯೆಬೂಸಿಯರು ವಾಸವಾಗಿರುವ ಯೆರೂಸಲೇಮಿಗೆ ದಕ್ಷಿಣಮಾರ್ಗವಾಗಿ ಹಿನ್ನೋಮ್ ತಗ್ಗನ್ನು ದಾಟಿ, ಉತ್ತರಕ್ಕಿರುವ ರೆಫಾಯಿಮ್ ತಗ್ಗಿನ ಕಡೆಯಲ್ಲಿ ಪಶ್ಚಿಮಕ್ಕೆ ಬೆನ್ ಹಿನ್ನೋಮನ ತಗ್ಗಿನ ಮುಂದಿರುವ ಬೆಟ್ಟದ ಶಿಖರದವರೆಗೂ ಹೋಗುತ್ತದೆ.</verse>
				<verse number="9">ಆ ಬೆಟ್ಟದ ಶಿಖರದಿಂದ ನೆಫ್ತೋಹದ ನೀರಿನ ಬುಗ್ಗೆಗೂ ಅಲ್ಲಿಂದ ಎಫ್ರೋನನ ಬೆಟ್ಟದ ಪಟ್ಟಣಗಳಿಗೂ ಅಲ್ಲಿಂದ ಕಿರ್ಯತ್ ಯಾರೀಮ್ ಆದ ಬಾಲಾ ಎಂಬ ಊರಿನವರೆಗೆ ಹೋಗುತ್ತದೆ.</verse>
				<verse number="10">ಬಾಲಾದಿಂದ ಪಶ್ಚಿಮಕ್ಕಿರುವ ಸೇಯೀರ್ ಬೆಟ್ಟವನ್ನು ಸುತ್ತಿ, ಅಲ್ಲಿಂದ ಕೆಸಾಲೋನಿನ ಯಾರೀಮ್ ಬೆಟ್ಟದ ಉತ್ತರಕ್ಕೂ ಅಲ್ಲಿಂದ ಬೇತ್ ಷೆಮೆಷ್ ಕಡೆಗೆ ಇಳಿದು ತಿಮ್ನಾಗೆ ಹೋಯಿತು.</verse>
				<verse number="11">ಅಲ್ಲಿಂದ ಉತ್ತರಕ್ಕಿರುವ ಎಕ್ರೋನಿನ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೂ, ಅಲ್ಲಿಂದ ಬಾಲಾ ಬೆಟ್ಟವನ್ನು ದಾಟಿ ಯಬ್ನೆಯೇಲಿಗೆ ಹೊರಟು ಸಮುದ್ರ ತೀರದಲ್ಲಿ ಮುಗಿಯುತ್ತದೆ.</verse>
				<verse number="12">ಅದು ಪಶ್ಚಿಮದ ಮೇರೆಯ ಮೆಡಿಟರೇನಿಯನ್ ಮಹಾಸಾಗರವಾಗಿದೆ. ಇದೇ ಯೆಹೂದ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸುತ್ತಲಿರುವ ಮೇರೆ.</verse>
				<verse number="13">ಇದಲ್ಲದೆ ಯೆಹೋಶುವನು ಯೆಹೋವ ದೇವರ ಅಪ್ಪಣೆಯ ಪ್ರಕಾರ ಯೆಫುನ್ನೆಯ ಮಗ ಕಾಲೇಬನಿಗೆ ಅನಾಕನ ತಂದೆಯ ಕಿರ್ಯತ್ ಅರ್ಬ ಎಂಬ ಹೆಬ್ರೋನನ್ನು ಯೆಹೂದನ ಮಕ್ಕಳ ನಡುವೆ ಸೊತ್ತಾಗಿ ಕೊಟ್ಟನು.</verse>
				<verse number="14">ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ, ಅಹೀಮನ್, ತಲ್ಮೈರನ್ನು ಹೊರಡಿಸಿಬಿಟ್ಟನು.</verse>
				<verse number="15">ಕಾಲೇಬನು ಅಲ್ಲಿಂದ ಹೊರಟು, ಕಿರ್ಯತ್ ಸೇಫೆರ್ ಎಂದು ಅನ್ನಿಸಿಕೊಳ್ಳುತ್ತಿದ್ದ ದೆಬೀರಿನ ವಾಸಿಗಳ ವಿರೋಧವಾಗಿ ಹೋದನು.</verse>
				<verse number="16">ಅಲ್ಲಿ ಕಾಲೇಬನು, “ಕಿರ್ಯತ್ ಸೇಫೆರನ್ನು ದಾಳಿಮಾಡಿ ತೆಗೆದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ,” ಎಂದು ಹೇಳಿದ್ದನು.</verse>
				<verse number="17">ಆಗ ಕಾಲೇಬನ ತಮ್ಮನಾದ ಕೆನಾಜನ ಮಗನಾದ ಒತ್ನಿಯೇಲನು ಅದನ್ನು ಹಿಡಿದನು. ಅನಂತರ ಕಾಲೇಬನು ತನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಅವನಿಗೆ ಮದುವೆ ಮಾಡಿಕೊಟ್ಟನು.</verse>
				<verse number="18">ಒಂದು ದಿನ ಅಕ್ಷಾ ಒತ್ನಿಯೇಲನೊಂದಿಗೆ ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಇನ್ನೂ ಒಂದು ಹೊಲವನ್ನು ಕೇಳುವುದಕ್ಕೆ ಅವನನ್ನು ಪ್ರೇರೇಪಿಸಿ, ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳಿಗೆ, “ನಿನಗೆ ಏನು ಬೇಕು?” ಎಂದನು.</verse>
				<verse number="19">ಅದಕ್ಕೆ ಅವಳು ಅವನಿಗೆ, “ನನಗೆ ಒಂದು ಸಹಾಯಮಾಡಬೇಕು. ಮೊದಲು ದಕ್ಷಿಣ ಹೊಲವನ್ನು ಕೊಟ್ಟೆ; ನೀರಿನ ಬುಗ್ಗೆಗಳನ್ನು ಸಹ ನೀನು ನನಗೆ ಕೊಡು,” ಎಂದಳು. ಆಗ ಕಾಲೇಬನು ಅವಳಿಗೆ ಮೇಲಿನ ಹಾಗೂ ಕೆಳಗಿನ ನೀರಿನ ಬುಗ್ಗೆಗಳನ್ನು ಕೊಟ್ಟನು.</verse>
				<verse number="20">ಯೆಹೂದ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ಉಂಟಾದ ಸೊತ್ತಿನ ವಿವರ:</verse>
				<verse number="21">ದಕ್ಷಿಣದ ಕಟ್ಟಕಡೆಗಿರುವ ಎದೋಮಿನ ಮೇರೆಗೆ ಸರಿಯಾಗಿ ಯೆಹೂದ ಗೋತ್ರಕ್ಕೆ ಇರುವ ಪಟ್ಟಣಗಳು. ಅವು: ಕಬ್ಜಯೇಲ್, ಏದೆರ್, ಯಾಗೂರ್,</verse>
				<verse number="22">ಕೀನಾ, ದೀಮೋನಾ, ಅದಾದಾ,</verse>
				<verse number="23">ಕೆದೆಷ್, ಹಾಚೋರ್, ಇತ್ನಾನ್,</verse>
				<verse number="24">ಜೀಫ್, ಟೆಲೆಮ್, ಬೆಯಾಲೋತ್,</verse>
				<verse number="25">ಹಾಚೋರ್ ಹದತ್ತಾ, ಕಿರ್ಯೋತ್ ಹೆಚ್ರೋನ್, ಎಂಬುವ ಹಾಚೋರ್,</verse>
				<verse number="26">ಅಮಾಮ್, ಶೆಮ, ಮೋಲಾದ,</verse>
				<verse number="27">ಹಜರ್ ಗದ್ದಾ, ಹೆಷ್ಮೋನ್, ಬೇತ್ ಪೆಲೆಟ್,</verse>
				<verse number="28">ಹಚರ್ ಷೂವಾಲ್, ಬೇರ್ಷೆಬ, ಬಿಜ್ಯೋತ್ಯಾ,</verse>
				<verse number="29">ಬಾಲಾ, ಇಯೀಮ್, ಎಚೆಮ್,</verse>
				<verse number="30">ಎಲ್ತೋಲದ್, ಕೆಸೀಲ್, ಹೊರ್ಮಾ,</verse>
				<verse number="31">ಚಿಕ್ಲಗ್, ಮದ್ಮನ್ನಾ, ಸನ್ಸನ್ನಾ,</verse>
				<verse number="32">ಲೆಬಾವೋತ್, ಶಿಲ್ಹೀಮ್, ಆಯಿನ್, ರಿಮ್ಮೋನ್ ಎಂಬವುಗಳೇ ಪಟ್ಟಣಗಳೆಲ್ಲಾ ಇಪ್ಪತ್ತೊಂಬತ್ತು ಮತ್ತು ಅವುಗಳ ಗ್ರಾಮಗಳು.</verse>
				<verse number="33">ಪಶ್ಚಿಮದ ತಗ್ಗಿನ ದೇಶ ಎಷ್ಟಾವೋಲ್, ಚೊರ್ಗಾ, ಅಶ್ಣಾ,</verse>
				<verse number="34">ಜಾನೋಹ, ಏಂಗನ್ನೀಮ್, ತಪ್ಪೂಹ, ಏನಾಮ್,</verse>
				<verse number="35">ಯರ್ಮೂತ್, ಅದುಲ್ಲಾಮ್, ಸೋಕೋ, ಅಜೇಕಾ,</verse>
				<verse number="36">ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಹದಿನಾಲ್ಕು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.</verse>
				<verse number="37">ಚೆನಾನ್, ಹದಾಷಾ, ಮಿಗ್ದಲ್ಗಾದ್,</verse>
				<verse number="38">ದಿಲಾನ್, ಮಿಚ್ಪೆ, ಯೊಕ್ತೇಲ್,</verse>
				<verse number="39">ಲಾಕೀಷ್, ಬೊಚ್ಕತ್, ಎಗ್ಲೋನ್,</verse>
				<verse number="40">ಕಬ್ಬೋನ್, ಲಹ್ಮಾಸ್, ಕಿತ್ಲೀಷ್,</verse>
				<verse number="41">ಗೆದೇರೋತ್, ಬೇತ್‌ದಾಗೋನ್, ನಾಮಾ, ಮಕ್ಕೇದಾ, ಎಂಬ ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳು.</verse>
				<verse number="42">ಇದಲ್ಲದೆ ಲಿಬ್ನಾ, ಎತೆರ್, ಆಷಾನ್,</verse>
				<verse number="43">ಇಪ್ತಾಹ, ಅಶ್ಣಾ, ನೆಜೀಬ್,</verse>
				<verse number="44">ಕೆಯೀಲಾ, ಅಕ್ಜೀಬ್, ಮಾರೇಷಾ, ಎಂಬ ಒಂಬತ್ತು ಪಟ್ಟಣಗಳೂ ಅವುಗಳ ಗ್ರಾಮಗಳು.</verse>
				<verse number="45">ಎಕ್ರೋನ್ ಅದರ ಪಟ್ಟಣಗಳು ಗ್ರಾಮಗಳು ಸಹ.</verse>
				<verse number="46">ಎಕ್ರೋನಿನ ಪಶ್ಚಿಮ ಸಮುದ್ರದವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳು.</verse>
				<verse number="47">ಅಷ್ಡೋದ್ ಪಟ್ಟಣ ಮತ್ತು ಅದರ ಸುತ್ತಲಿನ ಪಟ್ಟಣಗಳೂ ಗ್ರಾಮಗಳೂ, ಗಾಜಾ, ಅದರ ಪಟ್ಟಣಗಳು, ಅದರ ಗ್ರಾಮಗಳು. ಈಜಿಪ್ಟಿನ ಕಲ್ಲಿನ ನಾಲೆ, ಮೆಡಿಟೆರಿಯನ್ ಸಮುದ್ರ, ಅದರ ಮೇರೆ ಇವುಗಳವರೆಗೂ ಇತ್ತು.</verse>
				<verse number="48">ಬೆಟ್ಟಗಳಲ್ಲಿರುವ ಪ್ರದೇಶಗಳು: ಶಾಮೀರ್, ಯತ್ತೀರ್, ಸೋಕೋ,</verse>
				<verse number="49">ದನ್ನಾ, ದೆಬೀರ್ ಎಂಬ ಕಿರ್ಯತ್ ಸನ್ನಾ,</verse>
				<verse number="50">ಅನಾಬ್, ಎಷ್ಟೆಮೋ, ಅನೀಮ್,</verse>
				<verse number="51">ಗೋಷೆನ್, ಹೋಲೋನ್ ಮತ್ತು ಗಿಲೋ ಎಂಬ ಹನ್ನೊಂದು ಪಟ್ಟಣಗಳು ಅವುಗಳ ಗ್ರಾಮಗಳು.</verse>
				<verse number="52">ಅರಬ್, ರೂಮಾ, ಎಷಾನ್,</verse>
				<verse number="53">ಯಾನೂಮ್, ಬೇತ್ ತಪ್ಪೂಹ, ಅಫೇಕಾ,</verse>
				<verse number="54">ಹುಮ್ಟಾ, ಹೆಬ್ರೋನೆಂಬ ಕಿರ್ಯತ್ ಅರ್ಬ, ಚೀಯೋರ್ ಎಂಬ ಒಂಬತ್ತು ಪಟ್ಟಣಗಳೂ ಮತ್ತು ಅವುಗಳ ಗ್ರಾಮಗಳು.</verse>
				<verse number="55">ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ,</verse>
				<verse number="56">ಇಜ್ರೆಯೇಲ್, ಯೊಗ್ದೆಯಾಮ್, ಜಾನೋಹ,</verse>
				<verse number="57">ಕಯಿನ್, ಗಿಬೆಯ, ತಿಮ್ನಾ ಎಂಬ ಹತ್ತು ಪಟ್ಟಣಗಳು, ಅವುಗಳ ಗ್ರಾಮಗಳು.</verse>
				<verse number="58">ಹಲ್ಹೂಲ್, ಬೇತ್ ಚೂರ್, ಗೆದೋರ್,</verse>
				<verse number="59">ಮಾರಾತ್, ಬೇತ್ ಅನೋತ್, ಎಲ್ಟೆಕೋನ್ ಎಂಬ ಆರು ಪಟ್ಟಣಗಳು, ಅವುಗಳ ಗ್ರಾಮಗಳು.</verse>
				<verse number="60">ಕಿರ್ಯತ್ ಯಾರೀಮ್ ಎಂಬ ಕಿರ್ಯತ್ ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳು ಮತ್ತು ಅವುಗಳ ಗ್ರಾಮಗಳು.</verse>
				<verse number="61">ಮರುಭೂಮಿಯಲ್ಲಿರುವ ಬೇತ್ ಅರಾಬಾ, ಮಿದ್ದೀನ್, ಸೆಕಾಕಾ,</verse>
				<verse number="62">ನಿಬ್ಷಾನ್, ಉಪ್ಪಿನ ಪಟ್ಟಣವು ಮತ್ತು ಏನ್ಗೆದಿ ಎಂಬ ಪಟ್ಟಣಗಳನ್ನು ಒಳಗೊಂಡ ಆರು ಪಟ್ಟಣಗಳು ಅವುಗಳ ಗ್ರಾಮಗಳು.</verse>
				<verse number="63">ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೆಹೂದ ಗೋತ್ರದವರಿಂದ ಹೊರಡಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಈ ದಿವಸದವರೆಗೂ ಯೆಬೂಸಿಯರು ಯೆಹೂದ ಗೋತ್ರದವರ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.</verse>
			</chapter>
			<chapter number="16">
				<verse number="1">ಯೋಸೇಫನ ಮಕ್ಕಳಿಗೆ ಚೀಟು ಬಿದ್ದ ಪ್ರಕಾರ ಉಂಟಾದ ಸೊತ್ತಿನ ವಿವರ: ಯೆರಿಕೋವಿನ ಬಳಿಯಲ್ಲಿರುವ ಯೊರ್ದನ್ ನದಿಯಿಂದ ಪೂರ್ವದಲ್ಲಿರುವ ಯೆರಿಕೋವಿನ ಜಲದವರೆಗೂ ಮತ್ತು ಬೇತೇಲಿನ ಬೆಟ್ಟಗಳವರೆಗೂ ಇರುವ ಮರುಭೂಮಿಯ ಮಾರ್ಗವಾಗಿ ಹೋಗಿತ್ತು.</verse>
				<verse number="2">ಬೇತೇಲಿನಿಂದ ಅಂದರೆ ಲೂಜ್ ಅಲ್ಲಿಂದ ಅರ್ಕಿಯ ಮೇರೆಗಳಾದ ಅಟಾರೋತನ್ನು ದಾಟಿ,</verse>
				<verse number="3">ಪಶ್ಚಿಮಕ್ಕೆ ಯಫ್ಲೇಟ್ಯರ ಮೇರೆಗೂ ಕೆಳಗಡೆಯಾದ ಬೇತ್ ಹೋರೋನ್ ಮೇರೆಯವರೆಗೂ ಅಲ್ಲಿಂದ ಗೆಜೆರಿನವರೆಗೂ ಹೋಗಿ ಮೆಡಿಟೆರಿಯನ್ ಸಮುದ್ರ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.</verse>
				<verse number="4">ಹೀಗೆ ಇದನ್ನು ಯೋಸೇಫನ ಮಕ್ಕಳಾದ ಮನಸ್ಸೆ ಎಫ್ರಾಯೀಮರು ತಮಗೆ ಸೊತ್ತಾಗಿ ತೆಗೆದುಕೊಂಡರು.</verse>
				<verse number="5">ಅವರ ಕುಟುಂಬಗಳ ಪ್ರಕಾರ ಎಫ್ರಾಯೀಮ್ ಗೋತ್ರದ ಪ್ರದೇಶ ಹೀಗಿತ್ತು: ಪೂರ್ವದಿಕ್ಕಿನ ಅಟಾರೋತ್ ಅದ್ದಾರಿನಿಂದ ಪ್ರಾರಂಭಿಸಿ, ಮೇಲಿನ ಬೇತ್ ಹೋರೋನಿನವರೆಗೂ ಇತ್ತು.</verse>
				<verse number="6">ಅಲ್ಲಿಂದ ಮೆಡಿಟೆರಿಯನ್ ಸಮುದ್ರದ ಪಶ್ಚಿಮ ಮೇರೆಗೆ ಮಿಕ್ಮೆತಾತಿನಿಂದ ಉತ್ತರಕ್ಕೆ ಹೊರಟು ಪೂರ್ವಕ್ಕೆ ತಾನತ್ ಶೀಲೋವಿಗೆ ತಿರುಗಿ ಯಾನೋಹಕ್ಕೆ ಪೂರ್ವದ ಕಡೆಗೆ ಹಾದು ಹೋಗಿತ್ತು.</verse>
				<verse number="7">ಯಾನೋಹದಿಂದ ಅಟಾರೋತ್‌ಗೂ ನಾರಾ ಎಂಬ ಊರುಗಳ ಮೇಲೆ ಇಳಿದು ಯೆರಿಕೋವಿನ ಬಳಿಯಲ್ಲಿ ಬಂದು ಯೊರ್ದನ್ ನದಿಗೆ ಮುಗಿಯುವುದು.</verse>
				<verse number="8">ತಪ್ಪೂಹದಿಂದ ಪಶ್ಚಿಮದ ಮೇರೆಯೂ ಕಾನಾ ನದಿಗೆ ಹೋಗಿ ಮೆಡಿಟೆರೆನಿಯನ್ ಸಮುದ್ರದವರೆಗೆ ಮುಗಿಯುವುದು. ಇದು ಎಫ್ರಾಯೀಮನ ಮಕ್ಕಳ ಗೋತ್ರ ಅವರ ಕುಟುಂಬಗಳ ಪ್ರಕಾರವೇ ದೊರೆತ ಸೊತ್ತು.</verse>
				<verse number="9">ಇದಲ್ಲದೆ ಎಫ್ರಾಯೀಮ್ ಹಾಗೂ ಮನಸ್ಸೆ ಗೋತ್ರದವರ ಮಧ್ಯೆ ಕೊಡಲಾದ ಎಲ್ಲಾ ಪಟ್ಟಣಗಳೂ ಅವುಗಳ ಗ್ರಾಮಗಳೂ ಪ್ರತ್ಯೇಕವಾಗಿ ಕೊಡಲಾಗಿತ್ತು.</verse>
				<verse number="10">ಅವರು ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸದೆ ಇದ್ದುದರಿಂದ, ಎಫ್ರಾಯೀಮ್ಯರ ಮಧ್ಯದಲ್ಲಿ ಕಾನಾನ್ಯರು ಈವರೆಗೂ ಅವರಲ್ಲಿ ದಾಸತ್ವದಲ್ಲಿದ್ದುಕೊಂಡು ಕೆಲಸಮಾಡುವವರಾಗಿದ್ದಾರೆ.</verse>
			</chapter>
			<chapter number="17">
				<verse number="1">ಇದಲ್ಲದೆ ಮನಸ್ಸೆಯ ಗೋತ್ರಕ್ಕೂ ಭಾಗ ದೊರೆಯಿತು. ಏಕೆಂದರೆ ಅವನು ಯೋಸೇಫನಿಗೆ ಚೊಚ್ಚಲ ಮಗನಾಗಿದ್ದನು. ಮನಸ್ಸೆಯ ಹಿರಿಯ ಮಗ ಗಿಲ್ಯಾದನ ತಂದೆಯಾದ ಮಾಕೀರನು ಶೂರನಾದುದರಿಂದ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳು ಅವನ ಪಾಲಿಗೆ ಬಂದವು.</verse>
				<verse number="2">ಮನಸ್ಸೆಯ ಉಳಿದವರಿಗೆ ಅಬೀಯೆಜೆರನ ಮಕ್ಕಳಿಗೂ ಹೇಲೆಕ್‌ನ ಮಕ್ಕಳಿಗೂ ಅಸ್ರೀಯೇಲನ ಮಕ್ಕಳಿಗೂ ಶೆಕೆಮ್ ಮಕ್ಕಳಿಗೂ ಹೇಫೆರನ ಮಕ್ಕಳಿಗೂ ಶೆಮೀದಾನನ ಮಕ್ಕಳಿಗೂ ಅವರ ಕುಟುಂಬಗಳಿಗೆ ತಕ್ಕ ಸೊತ್ತು ದೊರೆಯಿತು. ಇವರು ತಮ್ಮ ಕುಟುಂಬಗಳ ಪ್ರಕಾರ ಯೋಸೇಫನ ಮಗನಾದ ಮನಸ್ಸೆಯ ಗಂಡು ಮಕ್ಕಳಾಗಿದ್ದವರು.</verse>
				<verse number="3">ಆದರೆ ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ, ಗಿಲ್ಯಾದನ ಮೊಮ್ಮಗನೂ, ಹೇಫೆರನ ಮಗನೂ ಆದ ಚಲ್ಪಹಾದನಿಗೆ ಪುತ್ರರಿರಲಿಲ್ಲ. ಆದರೆ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬ ಹೆಸರುಳ್ಳ ಪುತ್ರಿಯರು ಇದ್ದರು.</verse>
				<verse number="4">ಇವರು ಯಾಜಕನಾದ ಎಲಿಯಾಜರನ ಬಳಿಗೂ ನೂನನ ಮಗ ಯೆಹೋಶುವನ ಬಳಿಗೂ ಪ್ರಧಾನರುಗಳ ಬಳಿಗೂ ಬಂದು ಅವರಿಗೆ, “ನಮ್ಮ ಸಹೋದರರಲ್ಲಿ ನಮಗೂ ಸೊತ್ತನ್ನು ಕೊಡುವಂತೆ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದರು,” ಎಂದರು. ಆದ್ದರಿಂದ ಅವರ ತಂದೆಗಳ ಸಹೋದರರ ಜೊತೆಗೆ ಅವರಿಗೂ ಯೆಹೋವ ದೇವರ ವಾಕ್ಯದ ಪ್ರಕಾರ ಸೊತ್ತನ್ನು ಕೊಟ್ಟನು.</verse>
				<verse number="5">ಯೊರ್ದನ್ ನದಿ ಆಚೆಯಲ್ಲಿರುವ ಗಿಲ್ಯಾದ್, ಬಾಷಾನ್ ಎಂಬ ಪ್ರಾಂತ್ಯಗಳ ಜೊತೆಗೆ ಮನಸ್ಸೆಗೆ ಬಿದ್ದ ಚೀಟಿನಲ್ಲಿ ಈಚೆಯಲ್ಲಿಯೂ ಹತ್ತು ಪಾಲು ಸಿಕ್ಕಿದವು.</verse>
				<verse number="6">ಏಕೆಂದರೆ ಮನಸ್ಸೆಯ ಪುತ್ರಿಯರು ಸಹ ಅವನ ಪುತ್ರರಲ್ಲಿ ಸೊತ್ತನ್ನು ಹೊಂದಿದ್ದರು. ಆದರೆ ಉಳಿದ ಮನಸ್ಸೆಯ ಪುತ್ರರಿಗೆ ಗಿಲ್ಯಾದ್ ನಾಡು ದೊರೆಯಿತು.</verse>
				<verse number="7">ಮನಸ್ಸೆಯ ಮೇರೆ, ಆಶೇರಿನಿಂದ ಶೆಕೆಮಿನ ಮುಂದಿರುವ ಮಿಕ್ಮೆತಾತಿನವರೆಗೂ ಇತ್ತು. ಅಲ್ಲಿಂದ ದಕ್ಷಿಣ ಕಡೆಯಿರುವ ಎನ್ ತಪ್ಪೂಹದ ನಿವಾಸಗಳಿಗೆ ಹೋಗುತ್ತದೆ.</verse>
				<verse number="8">ತಪ್ಪೂಹದ ಭೂಮಿ ಮನಸ್ಸೆಯದಾಗಿತ್ತು. ಆದರೆ ಮನಸ್ಸೆಯ ಮೇರೆಯಲ್ಲಿರುವ ತಪ್ಪೂಹ ಎಫ್ರಾಯೀಮನ ಮಕ್ಕಳದ್ದಾಗಿತ್ತು.</verse>
				<verse number="9">ಮೇರೆ ಕಾನಾ ನದಿಯ ದಕ್ಷಿಣಕ್ಕೆ ನದಿಯವರೆಗೂ ಇಳಿದುಹೋಗುವುದು. ಅಲ್ಲಿರುವ ಮನಸ್ಸೆಯ ಪಟ್ಟಣಗಳಲ್ಲಿ ಕೆಲವು ಪಟ್ಟಣಗಳು ಎಫ್ರಾಯೀಮನದಾಗಿದ್ದವು. ಮನಸ್ಸೆಯ ಮೇರೆಯು ನದಿಯ ಉತ್ತರಕ್ಕಿರುವ ಮೆಡಿಟೆರೆನಿಯನ್ ಸಮುದ್ರದವರೆಗೂ ಹೋಗಿರುವುದು.</verse>
				<verse number="10">ನದಿಯ ದಕ್ಷಿಣ ಸೀಮೆ ಎಫ್ರಾಯೀಮನದು; ಉತ್ತರ ಸೀಮೆ ಮನಸ್ಸೆಯದು, ಮೆಡಿಟೆರೆನಿಯನ್ ಸಮುದ್ರವು ಅದರ ಮೇರೆಯಾಗಿರುವುದು. ಉತ್ತರಕ್ಕೆ ಇರುವ ಆಶೇರ್ ಗೋತ್ರದವರ ಪ್ರಾಂತವೂ ಪೂರ್ವಕ್ಕೆ ಇರುವ ಇಸ್ಸಾಕಾರ್ ಗೋತ್ರವೂ ಇರುವುದು.</verse>
				<verse number="11">ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದಲ್ಲಿಯೂ ಇರುವ ಸೀಮೆಗಳಾದ ಬೇತ್ ಷೆಯಾನ, ಅದರ ಗ್ರಾಮಗಳೂ ಇಬ್ಲೆಯಾಮ್ ಅದರ ಗ್ರಾಮಗಳೂ ದೋರ್ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ಎಂದೋರ್, ತಾನಕ್, ಮೆಗಿದ್ದೋ ಎಂಬ ಪಟ್ಟಣಗಳೂ ಅವುಗಳ ಗ್ರಾಮಗಳೂ ಮನಸ್ಸೆಗೆ ಸೇರಿದವು. ಮೂರನೆಯ ಊರು ನಾಫೋತ್ ಆಗಿರುತ್ತದೆ.</verse>
				<verse number="12">ಆದರೆ ಮನಸ್ಸೆಯ ಸಂತತಿಯರಿಗೆ ಆ ಪಟ್ಟಣಗಳ ನಿವಾಸಿಗಳಾದ ಕಾನಾನ್ಯರನ್ನು ಹೊರಡಿಸುವುದಕ್ಕಾಗದೆ ಹೋಯಿತು. ಕಾನಾನ್ಯರು ಆ ಸೀಮೆಯಲ್ಲೇ ವಾಸವಾಗಿರಲು ನಿರ್ಧರಿಸಿದ್ದರು.</verse>
				<verse number="13">ಆದರೆ ಇಸ್ರಾಯೇಲರು ಬಲಗೊಂಡಾಗ, ಕಾನಾನ್ಯರನ್ನು ಹೊರಡಿಸದೆ ಅವರನ್ನು ಜೀತದಾಳುಗಳನ್ನಾಗಿ ಮಾಡಿಕೊಂಡರು.</verse>
				<verse number="14">ಯೋಸೇಫನ ಸಂತತಿಯರು ಯೆಹೋಶುವನಿಗೆ, “ಯೆಹೋವ ದೇವರು ನಮ್ಮನ್ನು ಈವರೆಗೂ ಆಶೀರ್ವದಿಸುತ್ತಾ ಬಂದದ್ದರಿಂದ, ನಾವು ಮಹಾ ಜನಾಂಗವಾಗಿದ್ದೇವೆ. ಹೀಗಿರುವಾಗ ನೀವು ನಮಗೆ ಸೊತ್ತಾಗಿ ಒಂದೇ ಒಂದು ಭಾಗವನ್ನು ಮಾತ್ರ ಪಾಲನ್ನಾಗಿ ಕೊಟ್ಟಿದ್ದು ಏಕೆ?” ಎಂದು ಕೇಳಿದರು.</verse>
				<verse number="15">ಅದಕ್ಕೆ ಯೆಹೋಶುವನು ಉತ್ತರವಾಗಿ ಅವರಿಗೆ, “ನೀವು ಹೆಚ್ಚು ಜನರಾಗಿದ್ದರೆ ಮತ್ತು ನಿಮಗೆ ಎಫ್ರಾಯೀಮ್ ಪರ್ವತವು ಸಾಲದಿದ್ದರೆ, ನೀವು ಪೆರಿಜೀಯರ ಮತ್ತು ರೆಫಾಯರ ನಾಡುಗಳಿಗೆ ಹೋಗಿ ಅಲ್ಲಿನ ಕಾಡನ್ನು ಕಡಿದು ನಿಮಗೆ ಸ್ಥಳಮಾಡಿಕೊಳ್ಳಿರಿ,” ಎಂದನು.</verse>
				<verse number="16">ಅದಕ್ಕೆ ಯೋಸೇಫನ ಸಂತತಿಯರು, “ಆ ಪರ್ವತವು ನಮಗೆ ಸಾಲದು. ಇದಲ್ಲದೆ ತಗ್ಗಿನ ಸೀಮೆಯಲ್ಲಿರುವ ಬೇತ್ ಷೆಯಾನ್‌ನಲ್ಲಿಯೂ ಇಜ್ರೆಯೇಲ್ ಕಣಿವೆಯಲ್ಲಿಯೂ ವಾಸಿಸಿರುವ ಸಮಸ್ತ ಕಾನಾನ್ಯರ ಬಳಿಯಲ್ಲಿ ಕಬ್ಬಿಣದ ರಥಗಳು ಇವೆ,” ಎಂದರು.</verse>
				<verse number="17">ಆಗ ಯೆಹೋಶುವನು ಯೋಸೇಫನ ಮಕ್ಕಳಾದ ಎಫ್ರಾಯೀಮನಿಗೂ ಮನಸ್ಸೆಗೂ, “ನೀವು ಮಹಾಜನಾಂಗವೂ ಬಹು ಬಲವುಳ್ಳವರೂ ಆಗಿರುವಿರಿ. ಒಂದೇ ಭಾಗ ನಿಮಗೆ ಇರಬಾರದು. ಆದರೆ ಪರ್ವತವು ನಿಮ್ಮದಾಗಿರುವುದು.</verse>
				<verse number="18">ಏಕೆಂದರೆ ಅದು ಅಡವಿಯಾಗಿದೆ. ಅದನ್ನು ನೀವು ಕಡಿಯಬೇಕು. ಅದರ ಅಂತ್ಯಗಳವರೆಗೂ ನಿಮ್ಮದಾಗಿರುವುದು. ಕಬ್ಬಿಣದ ರಥಗಳಿದ್ದರೂ ಅವರು ಬಲಿಷ್ಠರಾಗಿದ್ದರೂ ನೀವು ಅವರನ್ನು ಹೊರಡಿಸಿಬಿಡಲು ನಿಮಗೆ ಸಾಧ್ಯ,” ಎಂದನು.</verse>
			</chapter>
			<chapter number="18">
				<verse number="1">ಇಸ್ರಾಯೇಲರ ಸಮೂಹವೆಲ್ಲಾ ಶೀಲೋವಿನಲ್ಲಿ ಒಟ್ಟು ಕೂಡಿ ಅಲ್ಲಿ ದೇವದರ್ಶನ ಗುಡಾರವನ್ನು ನಿಲ್ಲಿಸಿದರು. ದೇಶವು ಅವರ ವಶವಾಯಿತು.</verse>
				<verse number="2">ಆದರೆ ಇಸ್ರಾಯೇಲರಲ್ಲಿ ತಮ್ಮ ಬಾಧ್ಯತೆಯನ್ನು ಇನ್ನೂ ಹೊಂದಿಕೊಳ್ಳದ ಏಳು ಗೋತ್ರಗಳು ಉಳಿದಿದ್ದವು.</verse>
				<verse number="3">ಯೆಹೋಶುವನು ಇಸ್ರಾಯೇಲರಿಗೆ, “ನಿಮ್ಮ ತಂದೆಗಳ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಎಷ್ಟರವರೆಗೆ ಆಲಸ್ಯ ಮಾಡುವಿರಿ?</verse>
				<verse number="4">ಒಂದೊಂದು ಗೋತ್ರಕ್ಕೆ ಮೂರು ಮಂದಿಯ ಪ್ರಕಾರ ನಿಮ್ಮೊಳಗಿಂದ ಕರೆದುಕೊಂಡು ಬನ್ನಿರಿ. ನಾನು ಅವರನ್ನು ಕಳುಹಿಸುವೆನು. ಅವರು ಎದ್ದು ದೇಶದಲ್ಲೆಲ್ಲಾ ಹೋಗಿ ತಮ್ಮ ಬಾಧ್ಯತೆಗಳ ಪ್ರಕಾರ ಅದನ್ನು ಅಳತೆಮಾಡಿ ವಿವರವಾಗಿ ಬರೆಯಲಿ. ತರುವಾಯ ನನ್ನ ಬಳಿಗೆ ಅವರು ಬರಲಿ.</verse>
				<verse number="5">ನೀವು ಅದನ್ನು ಏಳು ಪಾಲಾಗಿ ಹಂಚಬೇಕು. ದಕ್ಷಿಣದಲ್ಲಿ ಯೆಹೂದವು, ಉತ್ತರದಲ್ಲಿ ಯೋಸೇಫನ ಮನೆತನದವರೂ ನೆಲೆಸಬೇಕು.</verse>
				<verse number="6">ನೀವು ದೇಶವನ್ನು ಏಳು ಪಾಲಾಗಿ ವಿತರಿಸಬೇಕು ಮತ್ತು ಅದರ ವಿವರಗಳನ್ನು ಇಲ್ಲಿ ನನ್ನ ಬಳಿಯಲ್ಲಿ ತರಬೇಕು. ಆಗ ನಾನು ಈ ಸ್ಥಳದಲ್ಲಿ ನಮ್ಮ ದೇವರಾದ ಯೆಹೋವ ದೇವರ ಮುಂದೆ ನಿಮಗಾಗಿ ಚೀಟುಗಳನ್ನು ಹಾಕುವೆನು.</verse>
				<verse number="7">ಆದರೆ ಲೇವಿಯರಿಗೆ ನಿಮ್ಮೊಳಗೆ ಪಾಲಿಲ್ಲ. ಏಕೆಂದರೆ ಅವರಿಗೆ ಯೆಹೋವ ದೇವರ ಯಾಜಕತ್ವವೇ ಅವರ ಸೊತ್ತು. ಇದಲ್ಲದೆ ಗಾದನೂ ರೂಬೇನನೂ ಮನಸ್ಸೆಯ ಅರ್ಧ ಗೋತ್ರವೂ ಯೊರ್ದನ್ ನದಿಯ ಪೂರ್ವದಿಕ್ಕಿನಲ್ಲಿ ಯೆಹೋವ ದೇವರ ಸೇವಕನಾದ ಮೋಶೆಯಿಂದಲೇ ತಮಗೆ ಸೊತ್ತನ್ನು ತೆಗೆದುಕೊಂಡಿದ್ದಾರೆ,” ಎಂದನು.</verse>
				<verse number="8">ಆ ಮನುಷ್ಯರು ನಾಡನ್ನು ಅಳತೆ ಮಾಡುವುದಕ್ಕಾಗಿ ಹೊರಟು ಹೋಗುವುದಕ್ಕೆ ಮುಂಚೆ ಯೆಹೋಶುವನು ಅವರಿಗೆ, “ನೀವು ಹೋಗಿ ದೇಶವೆಲ್ಲಾ ಸಂಚರಿಸಿ, ಅದನ್ನು ಅಳತೆಮಾಡಿ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ. ನಾನು ಇಲ್ಲಿ ಶೀಲೋವಿನಲ್ಲಿ ಯೆಹೋವ ದೇವರ ಮುಂದೆ ನಿಮಗೆ ಚೀಟುಗಳನ್ನು ಹಾಕುವಂತೆ ನನ್ನ ಬಳಿಗೆ ಬನ್ನಿರಿ,” ಎಂದು ಅಪ್ಪಣೆಕೊಟ್ಟನು.</verse>
				<verse number="9">ಆ ಮನುಷ್ಯರು ಆ ನಾಡಿಗೆ ಹೋಗಿ, ಅದರ ಪಟ್ಟಣಗಳ ಪ್ರಕಾರ ಏಳು ಪಾಲಾಗಿ ಒಂದು ಗ್ರಂಥದಲ್ಲಿ ಬರೆದುಕೊಂಡು ಶೀಲೋವಿನಲ್ಲಿರುವ ಪಾಳೆಯಕ್ಕೆ ಯೆಹೋಶುವನ ಬಳಿಗೆ ತಿರುಗಿ ಬಂದರು.</verse>
				<verse number="10">ಆಗ ಯೆಹೋಶುವನು ಅವರಿಗೆ ಶೀಲೋವಿನಲ್ಲಿ ಯೆಹೋವ ದೇವರ ಮುಂದೆ ಚೀಟುಗಳನ್ನು ಹಾಕಿದನು. ಅಲ್ಲಿ ಯೆಹೋಶುವನು ಇಸ್ರಾಯೇಲರಿಗೆ ನಾಡನ್ನು ಅವರ ಗೋತ್ರಗಳ ಪ್ರಕಾರ ಪಾಲುಗಳನ್ನು ಹಂಚಿಕೊಟ್ಟನು.</verse>
				<verse number="11">ಬೆನ್ಯಾಮೀನನ ಸಂತತಿಯವರಿಗೆ ಅವರ ಕುಟುಂಬಗಳ ಪ್ರಕಾರ ಅವರ ಗೋತ್ರಕ್ಕೆ ಚೀಟು ಬಿದ್ದಿತು. ಅವರ ಸೊತ್ತು ಯೆಹೂದ ಮತ್ತು ಯೋಸೇಫನ ಗೋತ್ರದವರ ಪ್ರಾಂತಗಳಿಗೆ ನಡುವೆಯಿತ್ತು.</verse>
				<verse number="12">ಅದರ ಉತ್ತರ ದಿಕ್ಕಿನ ಮೇರೆಯು ಯೊರ್ದನಿನಿಂದ ಹೊರಟು ಯೆರಿಕೋವಿನ ಉತ್ತರದ ಕಡೆಯಿಂದ ಬೆಟ್ಟಗಳಲ್ಲಿ ಪಶ್ಚಿಮದ ಕಡೆಗೆ ಏರಿ ಬೇತಾವೆನ ಮರುಭೂಮಿಗೆ ಮುಗಿಯುವುದು.</verse>
				<verse number="13">ಆ ಮೇರೆಯು ಅಲ್ಲಿಂದ ಬೇತೇಲೆಂಬ ಲೂಜಿಗೆ ಹಾದು, ಲೂಜಿನ ದಕ್ಷಿಣದ ಕಡೆಗೆ ಹೋಗಿ, ಅಟಾರೋತ್ ಅದ್ದಾರಿನ ಕೆಳಗಿನ ಬೇತ್ ಹೋರೋನಿಗೆ ದಕ್ಷಿಣದಲ್ಲಿರುವ ಬೆಟ್ಟಕ್ಕೆ ಹೋಗುವುದು.</verse>
				<verse number="14">ಇದಲ್ಲದೆ ಆ ಮೇರೆಯು ದಕ್ಷಿಣ ಎಲ್ಲೆಗೆ ಎದುರಾಗಿರುವ ಬೇತ್ ಹೋರೋನಿಗೆ ಎದುರಾಗಿ ಬೆಟ್ಟವನ್ನು ಹಿಡಿದು, ದಕ್ಷಿಣವಾಗಿ ಸುತ್ತಿಕೊಂಡು ಕಿರ್ಯತ್ ಯಾರೀಮ್ ಎಂಬ ಯೆಹೂದ ಗೋತ್ರದ ಪಟ್ಟಣವಾದ ಕಿರ್ಯತ್ ಬಾಳದ ಬಳಿಗೆ ಹೋಗಿ ಮುಗಿಯುವುದು. ಇದು ಪಶ್ಚಿಮ ಎಲ್ಲೆಯಾಗಿತ್ತು.</verse>
				<verse number="15">ಆ ದಕ್ಷಿಣ ಎಲ್ಲೆಯೂ ಕಿರ್ಯತ್ ಯಾರೀಮ್ ತುದಿಯಿಂದ ಹೊರಟು, ಪಶ್ಚಿಮಕ್ಕೆ ಹೋಗಿ, ನೆಫ್ತೋಹದ ಜಲಬುಗ್ಗೆಯ ಬಳಿ ಮುಗಿಯುತ್ತದೆ.</verse>
				<verse number="16">ನೆಫ್ತೋಹ ಬುಗ್ಗೆಯ ಮೇಲೆ ಬೆನ್ ಹಿನ್ನೋಮ್ ತಗ್ಗಿನ ಈಚೆಗೂ ರೆಫಾಯಿಮ್ ತಗ್ಗಿನ ಉತ್ತರದಲ್ಲಿಯೂ ಇರುವ ಬೆಟ್ಟದ ಅಂಚಿಗೆ ಹೋಗಿ, ಅಲ್ಲಿಂದ ದಕ್ಷಿಣದಲ್ಲಿ ಯೆಬೂಸಿಯರ ಮೇರೆಯಾದ ಬೆನ್ ಹಿನ್ನೋಮಿನ ಹಳ್ಳದ ಕಣಿವೆ ಮಾರ್ಗವಾಗಿ ಏನ್ ರೋಗೆಲಿಗೆ ಬರುತ್ತದೆ.</verse>
				<verse number="17">ಅಲ್ಲಿಂದ ಏನ್ ಷೆಮೆಷ್, ಅಲ್ಲಿಂದ ಅದುಮೀಮ್ ಎಂಬ ದಿಬ್ಬೆಗೆ ಎದುರಾಗಿ ಗೆಲೀಲೋತಿಗೂ, ಅಲ್ಲಿಂದ ರೂಬೇನನ ಪುತ್ರನಾದ ಬೋಹನನ ಕಲ್ಲಿಗೆ ಏರಿಹೋಗಿ,</verse>
				<verse number="18">ಅಲ್ಲಿಂದ ಬೇತ್ ಅರಾಬಾದ ಎದುರಾಗಿ ಉತ್ತರ ಭಾಗಕ್ಕೆ ಹೊರಟು, ಅರಾಬಾ ತಗ್ಗಿಗೆ ಇಳಿದು ಬರುತ್ತದೆ.</verse>
				<verse number="19">ಅಲ್ಲಿಂದ ಆ ಮೇರೆ ಬೇತ್ ಹೊಗ್ಲಾಕ್ಕೆ ಉತ್ತರ ಕಡೆಯಾಗಿ ಹೊರಟು, ಯೊರ್ದನ್ ನದಿ ಮುಖ ದ್ವಾರಕ್ಕೆ ಉತ್ತರವಾದ ಲವಣ ಸಮುದ್ರ ಎಂಬ ಲವಣ ಸಮುದ್ರದ ಉತ್ತರ ಮೂಲೆಯಲ್ಲಿ ಮುಗಿಯುತ್ತದೆ. ಇದೇ ದಕ್ಷಿಣ ಭಾಗದ ಮೇರೆ.</verse>
				<verse number="20">ಪೂರ್ವದಿಕ್ಕಿನಲ್ಲಿ ಯೊರ್ದನ್ ನದಿಯೇ ಅದರ ಮೇರೆಯಾಗಿತ್ತು. ಇದು ಬೆನ್ಯಾಮೀನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಸುತ್ತಲಿರುವ ಮೇರೆಗಳ ಸೊತ್ತಾಗಿತ್ತು.</verse>
				<verse number="21">ಬೆನ್ಯಾಮೀನನ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರಕಿರುವ ಪಟ್ಟಣಗಳ ವಿವರ: ಯೆರಿಕೋ, ಬೇತ್ ಹೊಗ್ಲಾ, ಏಮೆಕ್ ಕೆಚ್ಚೀಚ್ ತಗ್ಗು,</verse>
				<verse number="22">ಬೇತ್ ಅರಾಬಾ, ಚೆಮಾರಯಿಮ್, ಬೇತೇಲ್,</verse>
				<verse number="23">ಅವ್ವೀಮ್, ಪಾರಾ, ಒಫ್ರಾ,</verse>
				<verse number="24">ಕೆಫೆರ್ ಅಮ್ಮೋನಿ, ಒಫ್ನೀ, ಗೆಬಾ ಎಂಬ ಹನ್ನೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ ಆಗಿರುತ್ತವೆ.</verse>
				<verse number="25">ಇದಲ್ಲದೆ ಗಿಬ್ಯೋನ್, ರಾಮಾ, ಬೇರೋತ್,</verse>
				<verse number="26">ಮಿಚ್ಪೆ, ಕೆಫೀರಾ, ಮೋಚಾ,</verse>
				<verse number="27">ರೆಕೆಮ್, ಇರ್ಪೇಲ್, ತರಲಾ,</verse>
				<verse number="28">ಚೇಲ, ಎಲೆಫ್, ಯೆಬೂಸಿಯರು ಇದ್ದಂಥ ಯೆರೂಸಲೇಮು ಗಿಬೆಯ, ಕಿರ್ಯತ್ ಎಂಬ ಹದಿನಾಲ್ಕು ಪಟ್ಟಣಗಳೂ, ಅವುಗಳ ಗ್ರಾಮಗಳೂ ಆಗಿರುತ್ತವೆ. ಇವೇ ಬೆನ್ಯಾಮೀನ್ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆತ ಸೊತ್ತು.</verse>
			</chapter>
			<chapter number="19">
				<verse number="1">ಎರಡನೆಯ ಚೀಟು ಬಿದ್ದ ಭಾಗವು ಸಿಮೆಯೋನನ ಗೋತ್ರದವರದಾಗಿತ್ತು. ಸಿಮೆಯೋನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆಯಿತು. ಅವರ ಸೊತ್ತು ಯೆಹೂದ ಗೋತ್ರದ ಸೊತ್ತಿನ ಮಧ್ಯದಲ್ಲಿತ್ತು.</verse>
				<verse number="2">ಅವರಿಗೆ ಸೇರಿದ ಪಟ್ಟಣಗಳು ಯಾವುವೆಂದರೆ: ಬೇರ್ಷೆಬಾ ಅಥವಾ ಶೆಬಾ, ಮೋಲಾದಾ,</verse>
				<verse number="3">ಹಚರ್ ಷೂವಾಲ್, ಬಾಲಾ, ಎಚೆಮ್,</verse>
				<verse number="4">ಎಲ್ತೋಲದ್, ಬೆತೂಲ್, ಹೊರ್ಮಾ,</verse>
				<verse number="5">ಚಿಕ್ಲಗ್, ಬೇತ್ ಮರ್ಕಾಬೋತ್, ಹಚರ್‌ಸೂಸಾ,</verse>
				<verse number="6">ಬೇತ್ ಲೆಬಾವೋತ್, ಶಾರೂಹೆನ್ ಎಂಬ ಹದಿಮೂರು ಪಟ್ಟಣಗಳೂ, ಅವುಗಳ ಗ್ರಾಮಗಳೂ ಆಗಿದ್ದವು.</verse>
				<verse number="7">ಇದಲ್ಲದೆ ಆಯಿನ್, ರಿಮ್ಮೋನ್, ಎತೆರ್, ಆಷಾನ್ ಎಂಬ ನಾಲ್ಕು ಪಟ್ಟಣಗಳು ಅವುಗಳ ಗ್ರಾಮಗಳೂ ಆಗಿದ್ದವು.</verse>
				<verse number="8">ಇದರೊಂದಿಗೆ ಬಾಲಾತ್ ಬೇರಿನವರೆಗೂ ಇರುವ ಎಲ್ಲಾ ಪಟ್ಟಣ ಮತ್ತು ಅದರ ಗ್ರಾಮಗಳೂ ಬಾಲತ್ ಬೇರ್ ಎಂಬುದು ದಕ್ಷಿಣದಲ್ಲಿರುವ ನೆಗೇವಿನ ರಾಮದಲ್ಲಿ ಇರುತ್ತದೆ. ಇದೇ ಸಿಮೆಯೋನನ ಗೋತ್ರದವರ ಕುಟುಂಬಗಳ ಪ್ರಕಾರ ದೊರೆತ ಸೊತ್ತು.</verse>
				<verse number="9">ಸಿಮೆಯೋನನ ಗೋತ್ರದವರಿಗೆ ಬಾಧ್ಯತೆ ಯೆಹೂದ ಗೋತ್ರದವರ ಭಾಗದಿಂದ ಸಿಕ್ಕಿತು. ಏಕೆಂದರೆ ಯೆಹೂದ ಗೋತ್ರದ ಭಾಗವು ಅವರಿಗೆ ಹೆಚ್ಚಾಗಿದ್ದ ಕಾರಣ, ಸಿಮೆಯೋನನ ಗೋತ್ರದವರು ಯೆಹೂದ ಗೋತ್ರದವರ ಎಲ್ಲೆಯ ಒಳಗಿಂದಲೇ ತಮ್ಮ ಪಾಲನ್ನು ಹೊಂದಿದರು.</verse>
				<verse number="10">ಮೂರನೆಯ ಚೀಟು ಬಿದ್ದ ಭಾಗ ಜೆಬುಲೂನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಬಿದ್ದಿತು. ಅವರ ಬಾಧ್ಯತೆಯ ಮೇರೆ ಸಾರೀದ್ ವರೆಗೂ ಇತ್ತು.</verse>
				<verse number="11">ಅಲ್ಲಿಂದ ಪಶ್ಚಿಮ ಕಡೆಗೆ ಹೋಗಿ, ಮರಾಳಕ್ಕೆ ಏರಿ, ದಬ್ಬೆಷೆತಿಗೆ ಹೋಗಿ, ಯೊಕ್ನೆಯಾಮಿಗೆ ಎದುರಾದ ಹಳ್ಳಕ್ಕೆ ಹೋಗುತ್ತದೆ.</verse>
				<verse number="12">ಅದು ಸಾರೀದಿನಿಂದ ಸೂರ್ಯನು ಉದಯಿಸುವ ಪೂರ್ವದಿಕ್ಕಿನ ಕಿಸ್ಲೋತ್ ತಾಬೋರಿನ ಮೇರೆಗೆ ತಿರುಗಿ, ಅಲ್ಲಿಂದ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.</verse>
				<verse number="13">ಅಲ್ಲಿಂದ ಪೂರ್ವದಿಕ್ಕಿನಲ್ಲಿ ಮುಂದುವರೆದು ಗತ್‌ಹೇಫೆರನ್ನು ಮತ್ತು ಎತ್‌ಕಾಚೀನನ್ನು ದಾಟಿ, ರಿಮ್ಮೋನವರೆಗೂ ಹೋಗಿ ನೇಯಗೆ ತಿರುಗುತ್ತದೆ.</verse>
				<verse number="14">ಅಲ್ಲಿಂದ ಆ ಮೇರೆ ಉತ್ತರ ದಿಕ್ಕಿನಲ್ಲಿರುವ ಹನ್ನಾತೋನಿಗೆ ಸುತ್ತಿಕೊಂಡು ಇಫ್ತಯೇಲನ ಹಳ್ಳದ ತಗ್ಗಿಗೆ ಮುಗಿಯುತ್ತದೆ.</verse>
				<verse number="15">ಈ ಮೇರೆಯಲ್ಲಿರುವ ಕಟ್ಟಾತ್, ನಹಲಾಲ್, ಶಿಮ್ರೋನ್, ಇದಲಾ, ಬೇತ್ಲೆಹೇಮ್ ಮೊದಲಾದ ಹನ್ನೆರಡು ಪಟ್ಟಣಗಳು, ಅವುಗಳ ಗ್ರಾಮಗಳು ಸಹ ಒಳಪಟ್ಟಿರುತ್ತದೆ</verse>
				<verse number="16">ಜೆಬುಲೂನಿನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಆ ಪಟ್ಟಣಗಳೂ, ಅವುಗಳ ಗ್ರಾಮಗಳೂ ಅವರ ಬಾಧ್ಯತೆಯಾಗಿದ್ದವು.</verse>
				<verse number="17">ನಾಲ್ಕನೆಯ ಚೀಟು ಇಸ್ಸಾಕಾರನ ಸಂತತಿಯವರಿಗೆ ಬಿದ್ದಿತು.</verse>
				<verse number="18">ಅವರ ಮೇರೆಯು: ಇಜ್ರೆಯೇಲ್ ಕೆಸುಲೋತ್, ಶೂನೇಮ್,</verse>
				<verse number="19">ಹಫಾರಯಿಮ್, ಶಿಯೋನ್, ಅನಾಹರತ್,</verse>
				<verse number="20">ರಬ್ಬೀತ್, ಕಿಷ್ಯೋನ್, ಎಬೆಜ್,</verse>
				<verse number="21">ರೆಮೆತ್, ಏಂಗನ್ನೀಮ್, ಏನ್ ಹದ್ದಾ, ಬೇತ್ ಪಚ್ಚೇಚ್ ಎಂಬ ತೀರಗಳನ್ನು ಒಳಗೊಂಡಿತ್ತು.</verse>
				<verse number="22">ಆ ಎಲ್ಲೆಯು ತಾಬೋರ್, ಶಹಚೀಮಾ, ಬೇತ್ ಷೆಮೆಷ್ ಎಂಬ ಊರುಗಳಿಗೆ ಸೇರಿ ಯೊರ್ದನ್ ನದಿ ತೀರದಲ್ಲಿ ಮುಗಿಯುತ್ತದೆ. ಅಲ್ಲಿ ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳೂ ಇದ್ದವು.</verse>
				<verse number="23">ಇಸ್ಸಾಕಾರನ ಗೋತ್ರದ ಮಕ್ಕಳಿಗೆ ಅವರ ಕುಟುಂಬಗಳ ಪ್ರಕಾರ ಪಟ್ಟಣಗಳೂ, ಅವುಗಳ ಗ್ರಾಮಗಳೂ ಅವರಿಗೆ ದೊರೆತ ಪಾಲು.</verse>
				<verse number="24">ಚೀಟು ಬಿದ್ದ ಐದನೆಯ ಭಾಗವು ಆಶೇರನ ಗೋತ್ರಕ್ಕೆ ಅವರ ಕುಟುಂಬದ ಪ್ರಕಾರ ದೊರೆಯಿತು.</verse>
				<verse number="25">ಅವರ ಮೇರೆ: ಹೆಲ್ಕತ್, ಹಲೀ, ಬೆಟೆನ್, ಅಕ್ಷಾಫ್,</verse>
				<verse number="26">ಅಲಮ್ಮೆಲೆಕ್, ಅಮಾದ್, ಮಿಷಾಲ್ ಎಂಬ ಪಟ್ಟಣಗಳನ್ನು ಸುತ್ತಿಕೊಂಡು ಅದು ಪಶ್ಚಿಮಕ್ಕೆ ಕರ್ಮೆಲ್, ಶೀಹೋರ್ ಲಿಬ್ನತ್ ಕಡೆ ಹೋಗಿ,</verse>
				<verse number="27">ಅಲ್ಲಿಂದ ಪೂರ್ವದ ಕಡೆಯಾಗಿ ಬೇತ್‌ದಾಗೋನಿಗೆ ತಿರುಗುತ್ತದೆ. ಅನಂತರ ಜೆಬುಲೂನಿಗೂ ಬೇತ್ ಏಮೆಕಿಗೆ ಉತ್ತರ ದಿಕ್ಕಿನಲ್ಲಿ ಇರುವ ಇಫ್ತಯೇಲ್ ತಗ್ಗಿಗೂ ನೆಗೀಯೇಲ್ ಕಡೆ ಹಾದು, ಎಡಭಾಗದಲ್ಲಿರುವ ಕಾಬೂಲ್ ಕಡೆ ಮುಂದುವರೆಯುತ್ತದೆ.</verse>
				<verse number="28">ಅಲ್ಲಿಂದ ಅಬ್ದೋನ್, ರೆಹೋಬ್, ಹಮ್ಮೋನ್, ಕಾನಾ ಹಾಗೂ ಸೀದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.</verse>
				<verse number="29">ಅಲ್ಲಿಂದ ರಾಮಾ, ಟೈರ್ ಎಂಬ ಕೋಟೆಪಟ್ಟಣದವರೆಗೂ ಹೋಗುತ್ತದೆ. ಅಲ್ಲಿಂದ ಹೋಸಾ ಕಡೆ ಹೊರಟು ಮೆಡಿಟೆರಿಯನ್ ಸಮುದ್ರದ ಬಳಿ ಅಕ್ಜೀಬ್ ಮೇರೆಯ ಅಂಚಿಗೆ ಮುಗಿಯುತ್ತದೆ.</verse>
				<verse number="30">ಅದಕ್ಕೆ ಉಮ್ಮಾ, ಅಫೇಕ್ ಮತ್ತು ರೆಹೋಬ್ ಒಟ್ಟು ಇಪ್ಪತ್ತೆರಡು ಪಟ್ಟಣಗಳೂ ಅವುಗಳ ಗ್ರಾಮಗಳೂ ಇದ್ದವು.</verse>
				<verse number="31">ಇದೇ ಆಶೇರನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆತ ಪಟ್ಟಣಗಳೂ, ಅವುಗಳ ಗ್ರಾಮಗಳೂ ಆಗಿರುತ್ತವೆ.</verse>
				<verse number="32">ಆರನೆಯ ಚೀಟು ಬಿದ್ದ ಭಾಗವು ನಫ್ತಾಲಿಯ ಗೋತ್ರದ್ದಾಗಿತ್ತು. ನಫ್ತಾಲಿಯ ಗೋತ್ರದ ಅವರ ಕುಟುಂಬಗಳ ಪ್ರಕಾರ ಪಾಲು ದೊರೆಯಿತು.</verse>
				<verse number="33">ಅವರ ಮೇರೆಯು ಹೆಲೇಫ್ ಮತ್ತು ಚಾನನ್ನೀಮ್ ಎಂಬ ಕಡೆಯಲ್ಲಿ ಇರುವ ಅಲ್ಲೋನ್ ಮರದಿಂದ, ಆದಾಮಿ ನೆಕೆಬ್, ಯಬ್ನೆಯೇಲ್, ಇವುಗಳ ಮೇಲೆ ಹಾದು ಲಕ್ಕೂಮ್ ತನಕ ಹೋಗಿ ಯೊರ್ದನ್ ನದಿಯ ತೀರದಲ್ಲಿ ಮುಗಿಯುತ್ತದೆ.</verse>
				<verse number="34">ಆ ಮೇರೆಯು ಪಶ್ಚಿಮಕ್ಕೆ ಅಜ್ನೋತ್ ತಾಬೋರ್ ಕಡೆಗೆ ತಿರುಗಿ, ಅಲ್ಲಿಂದ ಹುಕ್ಕೋಕ್ ಹೊರಟು, ದಕ್ಷಿಣಕ್ಕೆ ಜೆಬುಲೂನನನ್ನೂ ಪಶ್ಚಿಮಕ್ಕೆ ಆಶೇರನ್ನೂ ಮತ್ತು ಯೆಹೂದಿಯರ ಮೇರೆಗೂ ಪೂರ್ವದಿಕ್ಕಿನಲ್ಲಿ ಯೊರ್ದನ್ ನದಿಯನ್ನು ಮುಟ್ಟಿ ಬರುವುದು.</verse>
				<verse number="35">ಇದರಲ್ಲಿರುವ ಕೋಟೆಗಳುಳ್ಳ ಪಟ್ಟಣಗಳು ಯಾವುವೆಂದರೆ: ಜಿದ್ದೀಮ್, ಚೇರ್, ಹಮ್ಮತ್, ರಕ್ಕತ್, ಕಿನ್ನೆರೆತ್,</verse>
				<verse number="36">ಅದಾಮಾ, ರಾಮಾ, ಹಾಚೋರ್,</verse>
				<verse number="37">ಕೆದೆಷ್, ಎದ್ರೈ, ಎನ್ ಹಾಚೋರ್,</verse>
				<verse number="38">ಇರೋನ್, ಮಿಗ್ದಲ್ ಎಲ್, ಹೊರೇಮ್, ಬೇತ್ ಅನಾತ್ ಹಾಗೂ ಬೇತ್ ಷೆಮೆಷ್. ಮೊದಲಾದ ಹತ್ತೊಂಬತ್ತು ಕೋಟೆಪಟ್ಟಣಗಳೂ, ಅವುಗಳ ಗ್ರಾಮಗಳು.</verse>
				<verse number="39">ಇದೇ ನಫ್ತಾಲಿಯ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ಸೊತ್ತಾಗಿ ಸಿಕ್ಕಿದ ಪಟ್ಟಣಗಳೂ ಅವುಗಳ ಗ್ರಾಮಗಳು.</verse>
				<verse number="40">ಇದಲ್ಲದೆ ಏಳನೆಯ ಚೀಟು ಬಿದ್ದ ಭಾಗವು ದಾನನ ಗೋತ್ರದವರಿಗೆ ಅವರ ಕುಟುಂಬಗಳ ಪ್ರಕಾರ ದೊರೆಯಿತು.</verse>
				<verse number="41">ಅವರಿಗೆ ದೊರೆತ ಸೊತ್ತಿನ ವಿವರ: ಚೊರ್ಗಾ, ಎಷ್ಟಾವೋಲ್, ಈರ್ ಷೆಮೆಷ್,</verse>
				<verse number="42">ಶಾಲಬ್ಬೀನ್, ಅಯ್ಯಾಲೋನ್, ಇತ್ಲಾ,</verse>
				<verse number="43">ಏಲೋನ್, ತಿಮ್ನಾ, ಎಕ್ರೋನ್,</verse>
				<verse number="44">ಎಲ್ತೆಕೇ, ಗಿಬ್ಬೆತೋನ್, ಬಾಲಾತ್,</verse>
				<verse number="45">ಯೆಹುದ್, ಬೆನೇ ಬೆರಕ್, ಗತ್ ರಿಮ್ಮೋನ್,</verse>
				<verse number="46">ಮೇಯರ್ಕೋನ್, ರಕ್ಕೋನ್ ಎಂಬ ಪಟ್ಟಣಗಳು. ಯೊಪ್ಪ ಊರಿಗೆ ಎದುರಾದ ಮೇರೆಯು ಸಹ ದೊರಕಿತು.</verse>
				<verse number="47">ಇದಲ್ಲದೆ ದಾನನ ಗೋತ್ರದ ಮೇರೆಯು ಅವರಿಗೆ ಸಾಲದ್ದರಿಂದ ಅವರು ಹೊರಟುಹೋಗಿ ಲೆಷೆಮಿನ ಮೇಲೆ ಖಡ್ಗದಿಂದ ಯುದ್ಧಮಾಡಿ, ಅದನ್ನು ಸೋಲಿಸಿ, ಸ್ವಾಧೀನಮಾಡಿಕೊಂಡರು. ಅವರು ಅದರಲ್ಲಿ ವಾಸವಾಗಿದ್ದು ಲೆಷೆಮಿಗೆ ತಮ್ಮ ತಂದೆಯಾದ ದಾನನ ಹೆಸರಿನ ಪ್ರಕಾರ ದಾನ್ ಎಂದು ಹೆಸರಿಟ್ಟರು.</verse>
				<verse number="48">ಈ ಪಟ್ಟಣಗಳೂ, ಅವುಗಳ ಗ್ರಾಮಗಳೂ, ದಾನ್ ಗೋತ್ರಕ್ಕೆ ಅವರ ಕುಟುಂಬಗಳ ಪ್ರಕಾರ ದೊರೆತ ಬಾಧ್ಯತೆಯು ಇದೇ.</verse>
				<verse number="49">ಅವರು ದೇಶವನ್ನು ಅದರ ಮೇರೆಗಳ ಪ್ರಕಾರ ಬಾಧ್ಯತೆಯಾಗಿ ಹಂಚಿಕೊಂಡ ಮೇಲೆ ಇಸ್ರಾಯೇಲರು ನೂನನ ಮಗನಾದ ಯೆಹೋಶುವನಿಗೆ ತಮ್ಮ ಮಧ್ಯದಲ್ಲಿ ಪಾಲನ್ನು ಕೊಟ್ಟರು.</verse>
				<verse number="50">ಅವನು ಕೇಳಿದ ಎಫ್ರಾಯೀಮ್ ಬೆಟ್ಟದಲ್ಲಿರುವ ತಿಮ್ನತ್ ಸೆರಹ ಎಂಬ ಪಟ್ಟಣವನ್ನು ಯೆಹೋವ ದೇವರ ಆಜ್ಞೆಯ ಪ್ರಕಾರ ಕೊಟ್ಟರು. ಅವನು ಪಟ್ಟಣವನ್ನು ಕಟ್ಟಿಕೊಂಡು ಅಲ್ಲಿಯೇ ನೆಲೆಸಿದನು.</verse>
				<verse number="51">ಯಾಜಕನಾದ ಎಲಿಯಾಜರನೂ ನೂನನ ಮಗ ಯೆಹೋಶುವನೂ ಇಸ್ರಾಯೇಲರ ಗೋತ್ರಗಳ ಪಿತೃಗಳ ಹಿರಿಯರೂ ಶೀಲೋವಿನಲ್ಲಿ ದೇವದರ್ಶನ ಗುಡಾರದ ಬಾಗಿಲ ಬಳಿಯಲ್ಲಿ ಯೆಹೋವ ದೇವರ ಸಮ್ಮುಖದಲ್ಲಿ ಚೀಟುಹಾಕಿ ಹಂಚಿಕೊಟ್ಟ ಬಾಧ್ಯತೆಗಳು ಇವೇ. ಹೀಗೆ ಅವರು ದೇಶವನ್ನು ಹಂಚಿಕೊಳ್ಳುವ ಕೆಲಸವನ್ನು ಪೂರೈಸಿದರು.</verse>
			</chapter>
			<chapter number="20">
				<verse number="1">ಯೆಹೋವ ದೇವರು ಯೆಹೋಶುವನಿಗೆ,</verse>
				<verse number="2">“ನಾನು ಮೋಶೆಯ ಮುಖಾಂತರ ನಿನಗೆ ಹೇಳಿದ ಆಶ್ರಯದ ಪಟ್ಟಣಗಳನ್ನು ಗೊತ್ತುಮಾಡಿಕೊಳ್ಳುವಂತೆ ನೀನು ಇಸ್ರಾಯೇಲರಿಗೆ ಹೇಳು.</verse>
				<verse number="3">ಯಾವನಾದರು ಅರಿಯದೆ ಅಕಸ್ಮಾತ್ತಾಗಿ ಕೈತಪ್ಪಿ ಕೊಂದುಹಾಕಿದರೆ, ಅಂಥವನು ಅಲ್ಲಿಗೆ ಓಡಿಹೋಗಲಿ. ಅವನಿಗೆ ರಕ್ತದ ಸೇಡು ತೀರಿಸುವವನಿಂದ ತಪ್ಪಿಸಿಕೊಳ್ಳುವ ಆಶ್ರಯವಾಗಿರಲಿ.</verse>
				<verse number="4">ಆ ಪಟ್ಟಣಗಳಲ್ಲಿ ಒಂದಕ್ಕೆ ಓಡಿ ಬಂದವನು, ಪಟ್ಟಣದ ಬಾಗಿಲ ದ್ವಾರದಲ್ಲಿ ನಿಂತುಕೊಂಡು, ಆ ಪಟ್ಟಣದ ಹಿರಿಯರ ಮುಂದೆ ತನ್ನ ವ್ಯಾಜ್ಯವನ್ನು ತಿಳಿಸಬೇಕು. ಅವರು ಅವನನ್ನು ಪಟ್ಟಣದೊಳಗೆ ಸೇರಿಸಿಕೊಳ್ಳಲಿ. ಅವರು ತಮ್ಮ ಬಳಿಯಲ್ಲಿ ವಾಸವಾಗಿರಲು ಅವನಿಗೆ ಸ್ಥಳವನ್ನು ಕೊಡಲಿ.</verse>
				<verse number="5">ರಕ್ತದ ಸೇಡು ತೀರಿಸಿಕೊಳ್ಳುವವನು ಅವನನ್ನು ಹಿಂದಟ್ಟಿ ಬಂದರೆ, ಕೊಲೆ ಮಾಡಿದವನನ್ನು ಅವನ ಕೈಗೆ ಒಪ್ಪಿಸಿಕೊಡಬಾರದು. ಏಕೆಂದರೆ ಅವನು ತನ್ನ ನೆರೆಯವನನ್ನು ಅಕಸ್ಮಾತ್ತಾಗಿ ಕೊಂದನು ಮತ್ತು ಪೂರ್ವದಲ್ಲಿ ಅವನ ಬಗ್ಗೆ ದ್ವೇಷ ಇರಲಿಲ್ಲ.</verse>
				<verse number="6">ಇದಲ್ಲದೆ ಅವನು ನ್ಯಾಯ ವಿಚಾರಣೆಗೋಸ್ಕರ ಸಭೆಯ ಮುಂದೆ ಬಂದು ನಿಲ್ಲುವವರೆಗೂ ಆ ದಿವಸಗಳಲ್ಲಿ ಇರುವ ಮಹಾಯಾಜಕನು ಮರಣ ಹೊಂದುವವರೆಗೂ ಆ ಪಟ್ಟಣದಲ್ಲೇ ವಾಸವಾಗಿರಬೇಕು. ತರುವಾಯ ಕೊಂದವನು ತಾನು ಬಿಟ್ಟು ಓಡಿ ಹೋದ ತನ್ನ ಪಟ್ಟಣಕ್ಕೂ, ತನ್ನ ಮನೆಗೂ ತಿರುಗಿಬರಬಹುದು,” ಎಂದು ಹೇಳಿದರು.</verse>
				<verse number="7">ಅದರಂತೆ ನಫ್ತಾಲಿಯ ಬೆಟ್ಟದ ಗಲಿಲಾಯದಲ್ಲಿ ಇರುವ ಕೆದೆಷನ್ನೂ, ಎಫ್ರಾಯೀಮನ ಬೆಟ್ಟಗಳಲ್ಲಿರುವ ಶೆಕೆಮನ್ನೂ, ಯೆಹೂದದ ಬೆಟ್ಟಗಳಲ್ಲಿರುವ ಹೆಬ್ರೋನ್ ಎಂಬ ಕಿರ್ಯತ್ ಅರ್ಬವನ್ನೂ ನೇಮಿಸಿದರು.</verse>
				<verse number="8">ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನ್ ನದಿ ಆಚೆ ರೂಬೇನನ ಗೋತ್ರಕ್ಕಿರುವ ಸಮ ಭೂಮಿಯ ಅರಣ್ಯದಲ್ಲಿರುವ ಬೆಚೆರನ್ನು ಗಾದನ ಗೋತ್ರಕ್ಕೆ ಗಿಲ್ಯಾದಿನ ರಾಮೋತನ್ನೂ, ಮನಸ್ಸೆಯ ಗೋತ್ರಕ್ಕೆ ಬಾಷಾನಿನಲ್ಲಿರುವ ಗೋಲಾನನ್ನೂ ಕೊಟ್ಟರು.</verse>
				<verse number="9">ಕೈತಪ್ಪಿ ಅರಿಯದೆ ಅಕಸ್ಮಾತ್ತಾಗಿ ಕೊಂದವನು ಯಾವನಾದರೂ ನ್ಯಾಯಸಭೆಯ ಮುಂದೆ ಬಂದು ನಿಲ್ಲುವ ತನಕ, ಸೇಡು ತೀರಿಸಿಕೊಳ್ಳುವವನ ಕೈಯಿಂದ ಸಾಯದ ಹಾಗೆ ಅಲ್ಲಿ ಓಡಿಹೋಗುವುದಕ್ಕೆ ಇಸ್ರಾಯೇಲರೆಲ್ಲರಿಗೂ, ಅವರ ಮಧ್ಯದಲ್ಲಿ ವಾಸವಾಗಿರುವ ಪರಕೀಯರಿಗೂ ನೇಮಿಸಲಾದ ಪಟ್ಟಣಗಳು ಇವೇ.</verse>
			</chapter>
			<chapter number="21">
				<verse number="1">ಲೇವಿ ಗೋತ್ರದ ಹಿರಿಯರು, ನೂನನ ಮಗನಾದ ಯೆಹೋಶುವನ ಬಳಿಗೂ ಇಸ್ರಾಯೇಲರ ಗೋತ್ರಗಳ ಹಿರಿಯರ ಬಳಿಗೂ ಯಾಜಕನಾದ ಎಲಿಯಾಜರನ ಬಳಿಗೂ ಬಂದರು.</verse>
				<verse number="2">ಅವರು ಕಾನಾನ್ ದೇಶದ ಶೀಲೋವಿನಲ್ಲಿ ಅವರನ್ನು ಸಂಧಿಸಿ, “ನಾವು ವಾಸವಾಗಿರುವ ಪಟ್ಟಣಗಳನ್ನು ನಮ್ಮ ಪಶುಗಳಿಗೋಸ್ಕರ ಅವುಗಳ ಉಪನಗರಗಳೊಂದಿಗೆ ನಮಗೆ ಕೊಡಬೇಕೆಂದು ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ್ದಾರೆ,” ಎಂದರು.</verse>
				<verse number="3">ಹಾಗೆಯೇ ಇಸ್ರಾಯೇಲರು ತಮ್ಮ ಬಾಧ್ಯತೆಯಲ್ಲಿ ಲೇವಿಯರಿಗೆ ಯೆಹೋವ ದೇವರ ಆಜ್ಞೆಯ ಪ್ರಕಾರ ಪಟ್ಟಣಗಳನ್ನೂ ಗೋಮಾಳಗಳನ್ನೂ ಕೊಟ್ಟರು. ಅವುಗಳ ವಿವರ:</verse>
				<verse number="4">ಕೊಹಾತ್ಯರ ಗೋತ್ರಗಳಿಗೆ ಚೀಟು ಬಂದಾಗ ಲೇವಿಯರಲ್ಲಿ ಯಾಜಕನಾದ ಆರೋನನ ಮಕ್ಕಳಿಗೆ ಯೆಹೂದದ ಗೋತ್ರದಲ್ಲಿಯೂ, ಸಿಮೆಯೋನನ ಗೋತ್ರದಲ್ಲಿಯೂ, ಬೆನ್ಯಾಮೀನನ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ಚೀಟಿಯಿಂದ ದೊರಕಿದವು.</verse>
				<verse number="5">ಕೊಹಾತ್ಯರಿಗೆ ಎಫ್ರಾಯೀಮನ ಗೋತ್ರದಲ್ಲಿಯೂ, ದಾನನ ಗೋತ್ರದಲ್ಲಿಯೂ, ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹತ್ತು ಪಟ್ಟಣಗಳು ಚೀಟಿಯಿಂದ ದೊರಕಿದವು.</verse>
				<verse number="6">ಗೇರ್ಷೋನ್ಯರಿಗೆ ಇಸ್ಸಾಕಾರನ ಗೋತ್ರದಲ್ಲಿಯೂ, ಆಶೇರನ ಗೋತ್ರದಲ್ಲಿಯೂ, ನಫ್ತಾಲಿಯ ಗೋತ್ರದಲ್ಲಿಯೂ, ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಹದಿಮೂರು ಪಟ್ಟಣಗಳು ಚೀಟಿಯಿಂದ ದೊರಕಿದವು.</verse>
				<verse number="7">ಇದಲ್ಲದೆ ಮೆರಾರೀಯರಿಗೆ ಅವರ ಕುಟುಂಬಗಳ ಪ್ರಕಾರ ರೂಬೇನನ ಗೋತ್ರದಲ್ಲಿಯೂ, ಗಾದನ ಗೋತ್ರದಲ್ಲಿಯೂ, ಜೆಬುಲೂನನ ಗೋತ್ರದಲ್ಲಿಯೂ ಹನ್ನೆರಡು ಪಟ್ಟಣಗಳು ದೊರಕಿದವು.</verse>
				<verse number="8">ಈ ಪಟ್ಟಣಗಳನ್ನೂ, ಅವುಗಳಿಗೆ ಸೇರಿದ ಗೋಮಾಳಗಳನ್ನೂ ಇಸ್ರಾಯೇಲರು ಯೆಹೋವ ದೇವರು ಮೋಶೆಯ ಮುಖಾಂತರ ಆಜ್ಞಾಪಿಸಿದ ಪ್ರಕಾರ, ಲೇವಿಯರಿಗೆ ಚೀಟು ಹಾಕಿಕೊಟ್ಟರು.</verse>
				<verse number="9">ಅವರು ಯೆಹೂದನ ಗೋತ್ರದಲ್ಲಿಯೂ ಸಿಮೆಯೋನನ ಗೋತ್ರದಲ್ಲಿಯೂ ಕೆಲವು ಪಟ್ಟಣಗಳನ್ನು ಕೊಟ್ಟರು.</verse>
				<verse number="10">ಲೇವಿಯರಿಗೆ ಮೊದಲನೆಯ ಚೀಟು ಬಿದ್ದ ಕಾರಣ, ಲೇವಿ ಗೋತ್ರಕ್ಕೆ ಸೇರಿದ ಕೊಹಾತ್ಯರಾದ ಆರೋನನ ಸಂತತಿಯರಿಗೆ ಯೆಹೂದ ಗೋತ್ರದಲ್ಲಿಯೂ, ಸಿಮೆಯೋನನ ಗೋತ್ರದಲ್ಲಿಯೂ ಕೂಡಲಾದ ಪಟ್ಟಣಗಳ ವಿವರ:</verse>
				<verse number="11">ಯೆಹೂದದ ಬೆಟ್ಟಗಳಲ್ಲಿರುವ ಅನಾಕನ ಪಿತೃವಾದ ಕಿರ್ಯತ್ ಅರ್ಬನ ಹೆಸರಿದ್ದ ಪಟ್ಟಣವಾದ ಹೆಬ್ರೋನನ್ನೂ, ಅದರ ಸುತ್ತಲಿರುವ ಗೋಮಾಳಗಳನ್ನೂ ಅವರಿಗೆ ಕೊಟ್ಟರು.</verse>
				<verse number="12">ಆದರೆ ಆ ಪಟ್ಟಣದ ಹೊಲಗಳನ್ನೂ, ಅದರ ಗ್ರಾಮಗಳನ್ನೂ ಯೆಫುನ್ನೆಯ ಮಗನಾದ ಕಾಲೇಬನಿಗೂ ಬಾಧ್ಯತೆಯಾಗಿ ಕೊಟ್ಟರು.</verse>
				<verse number="13">ಹೀಗೆಯೇ ಯಾಜಕನಾದ ಆರೋನನ ವಂಶದವರಿಗೆ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಹೆಬ್ರೋನನ್ನೂ ಕೊಟ್ಟರು. ಲಿಬ್ನಾವನ್ನೂ</verse>
				<verse number="14">ಯತ್ತೀರನ್ನೂ ಎಷ್ಟೆಮೋವನ್ನೂ</verse>
				<verse number="15">ಹೋಲೋನನ್ನೂ ದೆಬೀರನ್ನೂ</verse>
				<verse number="16">ಆಯಿನ್, ಯುಟ್ಟಾ, ಬೇತ್ ಷೆಮೆಷ್ ಎಂಬ ಆ ಎರಡು ಗೋತ್ರಗಳಿಂದ ಈ ಒಂಬತ್ತು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಟ್ಟರು.</verse>
				<verse number="17">ಇದಲ್ಲದೆ ಬೆನ್ಯಾಮೀನನ ಗೋತ್ರದಲ್ಲಿ ಗಿಬ್ಯೋನನ್ನೂ ಗೆಬಾನನ್ನೂ</verse>
				<verse number="18">ಅನಾತೋತನ್ನೂ ಅಲ್ಮೋನನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಟ್ಟರು.</verse>
				<verse number="19">ಯಾಜಕನಾದ ಆರೋನನ ವಂಶದವರಿಗೆ ಒಟ್ಟು ಹದಿಮೂರು ಪಟ್ಟಣಗಳೂ, ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.</verse>
				<verse number="20">ಇದಲ್ಲದೆ ಲೇವಿಯರಾದ ಕೊಹಾತ್ಯನ ಗೋತ್ರದ ಕುಟುಂಬದಲ್ಲಿ ಉಳಿದವರಿಗೆ ಎಫ್ರಾಯೀಮನ ಗೋತ್ರದಲ್ಲಿ ಚೀಟಿಯಿಂದ ದೊರಕಿದ ಪಟ್ಟಣಗಳ ವಿವರ:</verse>
				<verse number="21">ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಎಫ್ರಾಯೀಮನ ಬೆಟ್ಟಗಳಲ್ಲಿರುವ, ಶೆಕೆಮನ್ನೂ ಗೆಜೆರನ್ನೂ</verse>
				<verse number="22">ಕಿಬ್‌ಚೈಮ್ ಮತ್ತು ಬೇತ್ ಹೋರೋನ್ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.</verse>
				<verse number="23">ಇದಲ್ಲದೆ ದಾನ್ಯನ ಗೋತ್ರದಲ್ಲಿ, ಎಲ್ತೆಕೇಯನ್ನೂ ಗಿಬ್ಬೆತೋನನ್ನೂ</verse>
				<verse number="24">ಅಯ್ಯಾಲೋನನ್ನೂ ಗತ್ ರಿಮ್ಮೋನನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.</verse>
				<verse number="25">ಮನಸ್ಸೆಯ ಅರ್ಧಗೋತ್ರದಲ್ಲಿ, ತಾನಕನ್ನೂ ಗತ್ ರಿಮ್ಮೋನನ್ನೂ ಹೀಗೆ ಎರಡು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.</verse>
				<verse number="26">ಹೀಗೆ ಉಳಿದಂಥ ಕೊಹಾತ್ಯನ ಗೋತ್ರಗಳಲ್ಲಿ ಹತ್ತು ಪಟ್ಟಣಗಳೂ ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.</verse>
				<verse number="27">ಲೇವಿ ಗೋತ್ರದ ಗೇರ್ಷೋನ್ಯರಿಗೆ ಮನಸ್ಸೆಯ ಅರ್ಧಗೋತ್ರದಲ್ಲಿ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಬಾಷಾನಿನಲ್ಲಿರುವ ಗೋಲಾನನ್ನೂ ಬೆಯೆಷ್ಟೆರಾವನ್ನೂ ಹೀಗೆ ಎರಡು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.</verse>
				<verse number="28">ಇದಲ್ಲದೆ ಇಸ್ಸಾಕಾರನ ಗೋತ್ರದ ಸೊತ್ತಿನಿಂದ ಕಿಷ್ಯೋನನ್ನೂ ದಾಬೆರತನ್ನೂ</verse>
				<verse number="29">ಯರ್ಮೂತ್ ಮತ್ತು ಏಂಗನ್ನೀಮನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.</verse>
				<verse number="30">ಆಶೇರನ ಗೋತ್ರದ ಸೊತ್ತಿನಿಂದ ಮಿಷಾಲನ್ನೂ, ಅಬ್ದೋನನ್ನೂ</verse>
				<verse number="31">ಹೆಲ್ಕತನ್ನೂ ರೆಹೋಬನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.</verse>
				<verse number="32">ನಫ್ತಾಲಿಯ ಗೋತ್ರದಲ್ಲಿ ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಗಲಿಲಾಯದಲ್ಲಿರುವ ಕೆದೆಷನ್ನೂ ಹಮ್ಮೋತ್ ದೋರನ್ನೂ ಕರ್ತಾನನ್ನೂ ಹೀಗೆ ಮೂರು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.</verse>
				<verse number="33">ಗೇರ್ಷೋನ್ಯರಿಗೆ ಅವರ ಕುಟುಂಬಗಳ ಪ್ರಕಾರ ಹದಿಮೂರು ಪಟ್ಟಣಗಳೂ ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.</verse>
				<verse number="34">ಉಳಿದ ಲೇವಿಯರಾದ ಮೆರಾರೀಯ ಕುಟುಂಬಗಳಿಗೆ ಜೆಬುಲೂನನ ಗೋತ್ರದ ಸೊತ್ತಿನಿಂದ ಯೊಕ್ನೆಯಾಮ್, ಕರ್ತಾ,</verse>
				<verse number="35">ದಿಮ್ನಾ, ನಹಲಾಲ್, ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.</verse>
				<verse number="36">ಇದಲ್ಲದೆ ರೂಬೇನನ ಗೋತ್ರದಲ್ಲಿ ಬೆಚೆರನ್ನೂ ಯಹಚವನ್ನೂ</verse>
				<verse number="37">ಕೆದೇಮೋತನ್ನೂ ಮೇಫಾತನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.</verse>
				<verse number="38">ಗಾದ್ಯರ ಗೋತ್ರದಲ್ಲಿ, ಅಕಸ್ಮಾತ್ತಾಗಿ ಕೊಲೆ ಮಾಡಿದವನಿಗೆ ಆಶ್ರಯ ಪಟ್ಟಣವಾದ ಗಿಲ್ಯಾದಿನ ರಾಮೋತನ್ನೂ, ಮಹನಯಿಮನ್ನೂ,</verse>
				<verse number="39">ಹೆಷ್ಬೋನನ್ನೂ ಯಜ್ಜೇರನ್ನೂ ಹೀಗೆ ನಾಲ್ಕು ಪಟ್ಟಣಗಳನ್ನು ಅವುಗಳ ಗೋಮಾಳ ಸಹಿತವಾಗಿ ಕೊಡಲಾಯಿತು.</verse>
				<verse number="40">ಹೀಗೆಯೇ ಲೇವಿ ಗೋತ್ರದ ಉಳಿದಂಥ ಮೆರಾರೀಯರ ಕುಟುಂಬಗಳ ಪ್ರಕಾರ ಚೀಟಿಯಿಂದ ದೊರೆತ ಪಟ್ಟಣಗಳು ಹನ್ನೆರಡು.</verse>
				<verse number="41">ಇಸ್ರಾಯೇಲರ ನಡುವೆ ಲೇವಿಯರಿಗೆ ಒಟ್ಟು ನಾಲ್ವತ್ತೆಂಟು ಪಟ್ಟಣಗಳು ಅವುಗಳ ಗೋಮಾಳ ಸಹಿತವಾಗಿ ದೊರಕಿದವು.</verse>
				<verse number="42">ಈ ಪಟ್ಟಣಗಳ ಸುತ್ತಲೂ ಪ್ರತಿ ಒಂದಕ್ಕೂ ಗೋಮಾಳಗಳಿದ್ದವು. ಎಲ್ಲ ಪಟ್ಟಣಗಳಿಗೂ ಹೀಗೆಯೇ ಇದ್ದವು.</verse>
				<verse number="43">ಈ ರೀತಿಯಾಗಿ ಯೆಹೋವ ದೇವರು ಅವರ ಪಿತೃಗಳಿಗೆ ಕೊಡುವೆನೆಂದು ಆಣೆಯಿಟ್ಟ ದೇಶವನ್ನೆಲ್ಲಾ ಇಸ್ರಾಯೇಲಿಗೆ ಕೊಟ್ಟರು. ಇಸ್ರಾಯೇಲರು ಅದನ್ನು ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸವಾಗಿದ್ದರು.</verse>
				<verse number="44">ಯೆಹೋವ ದೇವರು ಅವರ ತಂದೆಗಳಿಗೆ ಆಣೆಯಿಟ್ಟ ಪ್ರಕಾರವೇ ಅವರ ಸುತ್ತಲೂ ಅವರಿಗೆ ವಿಶ್ರಾಂತಿಕೊಟ್ಟರು. ಅವರ ಎಲ್ಲಾ ಶತ್ರುಗಳಲ್ಲಿ ಒಬ್ಬನಾದರೂ ಅವರ ಮುಂದೆ ನಿಲ್ಲಲಿಲ್ಲ. ಅವರ ಶತ್ರುಗಳನ್ನೆಲ್ಲಾ ಯೆಹೋವ ದೇವರು ಅವರ ಕೈಗಳಿಗೆ ಒಪ್ಪಿಸಿದರು.</verse>
				<verse number="45">ಯೆಹೋವ ದೇವರು ಇಸ್ರಾಯೇಲರಿಗೆ ಹೇಳಿದ ಅತಿ ಶ್ರೇಷ್ಠವಾಗ್ದಾನಗಳಲ್ಲಿ ಒಂದಾದರೂ ಬಿದ್ದು ಹೋಗಲಿಲ್ಲ. ಎಲ್ಲಾ ನೆರವೇರಿದವು.</verse>
			</chapter>
			<chapter number="22">
				<verse number="1">ಯೆಹೋಶುವನು ರೂಬೇನ್ಯರನ್ನೂ ಗಾದ್ಯರನ್ನೂ ಮನಸ್ಸೆಯ ಅರ್ಧ ಗೋತ್ರದವರನ್ನೂ ಕರಿಸಿ ಅವರಿಗೆ,</verse>
				<verse number="2">“ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ನೀವು ಕೈಗೊಂಡು, ನಾನು ನಿಮಗೆ ಆಜ್ಞಾಪಿಸಿದ ಎಲ್ಲಾದರಲ್ಲಿ ನನ್ನ ಮಾತಿಗೆ ವಿಧೇಯರಾಗಿದ್ದೀರಿ.</verse>
				<verse number="3">ನೀವು ಬಹಳ ದಿವಸಗಳಿಂದ ಇಂದಿನವರೆಗೂ ನಿಮ್ಮ ಸಹೋದರರನ್ನು ಕೈಬಿಡದೆ, ನಿಮ್ಮ ದೇವರಾದ ಯೆಹೋವ ದೇವರು ಆಜ್ಞಾಪಿಸಿದ ಅಪ್ಪಣೆಯನ್ನು ಪಾಲಿಸುತ್ತಾ ಬಂದಿದ್ದೀರಿ.</verse>
				<verse number="4">ಈಗ ನಿಮ್ಮ ದೇವರಾದ ಯೆಹೋವ ದೇವರು ಅವರಿಗೆ ವಾಗ್ದಾನ ಮಾಡಿದ ಪ್ರಕಾರ, ನಿಮ್ಮ ಸಹೋದರರಿಗೆ ವಿಶ್ರಾಂತಿ ಕೊಟ್ಟಿದ್ದಾರೆ. ಯೆಹೋವ ದೇವರ ಸೇವಕನಾದ ಮೋಶೆಯು ಯೊರ್ದನ್ ನದಿ ಆಚೆ ಕಡೆ ನಿಮಗೆ ಕೊಟ್ಟ ಸೊತ್ತಿನ ದೇಶದಲ್ಲಿರುವ ನಿಮ್ಮ ನಿವಾಸಗಳಿಗೆ ನೀವು ಹೊರಡಿರಿ.</verse>
				<verse number="5">ಆದರೆ ಯೆಹೋವ ದೇವರ ಸೇವಕನಾದ ಮೋಶೆಯು ನಿಮಗೆ ಆಜ್ಞಾಪಿಸಿದ ಆಜ್ಞೆಯನ್ನೂ ನಿಯಮವನ್ನೂ ಜಾಗ್ರತೆಯಾಗಿ ಕೈಗೊಂಡು ನಡೆದು, ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದು, ಅವರ ಆಜ್ಞೆಗಳನ್ನು ಕೈಗೊಂಡು ಅವರನ್ನು ಅಂಟಿಕೊಂಡು, ಅವರನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ,” ಎಂದು ಹೇಳಿದನು.</verse>
				<verse number="6">ಯೆಹೋಶುವನು ಅವರನ್ನು ಆಶೀರ್ವದಿಸಿ ಕಳುಹಿಸಿಬಿಟ್ಟಾಗ ಅವರು ತಮ್ಮ ಗುಡಾರಗಳಿಗೆ ಹೋದರು.</verse>
				<verse number="7">ಮನಸ್ಸೆಯ ಅರ್ಧ ಗೋತ್ರಕ್ಕೆ ಮೋಶೆಯು ಬಾಷಾನಿನಲ್ಲಿ ಸೊತ್ತನ್ನು ಕೊಟ್ಟಿದ್ದನು. ಇದಲ್ಲದೆ ಅವರ ಅರ್ಧ ಗೋತ್ರಕ್ಕೆ ಯೆಹೋಶುವನು ಸಹ ಯೊರ್ದನ್ ನದಿ ಪಶ್ಚಿಮಕ್ಕೆ ಅವರ ಸಹೋದರರ ನಡುವೆ ಸೊತ್ತನ್ನು ಕೊಟ್ಟಿದ್ದನು. ಇದಲ್ಲದೆ ಯೆಹೋಶುವನು ಅವರನ್ನು ಅವರ ಗುಡಾರಗಳಿಗೆ ಕಳುಹಿಸುವಾಗ ಅವರನ್ನು ಆಶೀರ್ವದಿಸಿ ಅವರಿಗೆ,</verse>
				<verse number="8">“ನೀವು ಬಹು ಆಸ್ತಿಯುಳ್ಳವರಾಗಿ ಪಶುಗಳು, ಬೆಳ್ಳಿ, ಬಂಗಾರ, ಕಂಚು, ಕಬ್ಬಿಣ, ಬಹು ಹೆಚ್ಚಾದ ವಸ್ತ್ರಗಳೊಂದಿಗೆ ಹಿಂದಿರುಗಿ, ನಿಮ್ಮ ಗುಡಾರಗಳಿಗೆ ಹೋಗಿರಿ. ನಿಮ್ಮ ಶತ್ರುಗಳ ಕೊಳ್ಳೆಯನ್ನು ನಿಮ್ಮ ಸಹೋದರರ ಸಂಗಡ ಹಂಚಿಕೊಳ್ಳಿರಿ,” ಎಂದನು.</verse>
				<verse number="9">ರೂಬೇನನ ಗೋತ್ರದವರು, ಗಾದ್ಯ ಗೋತ್ರದವರು, ಮನಸ್ಸೆಯ ಅರ್ಧ ಗೋತ್ರದವರು ಕಾನಾನ್ ದೇಶದ ಶೀಲೋವಿನಲ್ಲಿದ್ದ ಇಸ್ರಾಯೇಲರನ್ನು ಬಿಟ್ಟು, ಯೆಹೋವ ದೇವರು ಮೋಶೆಗೆ ಕೊಟ್ಟ ಮಾತಿನ ಪ್ರಕಾರ ತಾವು ವಶಮಾಡಿಕೊಂಡ ತಮ್ಮ ಗಿಲ್ಯಾದ್ ನಾಡಿಗೆ ಹೋದರು.</verse>
				<verse number="10">ರೂಬೇನ್ಯರೂ ಗಾದ್ಯರೂ ಮನಸ್ಸೆಯ ಅರ್ಧ ಗೋತ್ರದವರು ಕಾನಾನ್ ದೇಶದಲ್ಲಿರುವ ಯೊರ್ದನ್ ನದಿ ಪ್ರಾಂತಕ್ಕೆ ಬಂದಾಗ, ಅಲ್ಲಿ ದೊಡ್ಡ ಬಲಿಪೀಠವನ್ನು ಕಟ್ಟಿದರು.</verse>
				<verse number="11">ರೂಬೇನ್ಯರೂ ಗಾದ್ಯರೂ ಮನಸ್ಸೆಯ ಅರ್ಧ ಗೋತ್ರದವರೂ ಕಾನಾನ್ ದೇಶಕ್ಕೆ ಎದುರಾಗಿ ಇಸ್ರಾಯೇಲರು ದಾಟಿಬಂದ ಯೊರ್ದನ್ ನದಿ ಪ್ರಾಂತದಲ್ಲಿ ಬಲಿಪೀಠವನ್ನು ಕಟ್ಟಿದರೆಂಬ ಸುದ್ದಿ ಇಸ್ರಾಯೇಲರಿಗೆ ಮುಟ್ಟಿತು.</verse>
				<verse number="12">ಇಸ್ರಾಯೇಲರು ಅದನ್ನು ಕೇಳಿದಾಗ, ಅವರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಶೀಲೋವಿನಲ್ಲಿ ಕೂಡಿದರು.</verse>
				<verse number="13">ಅವರು ಗಿಲ್ಯಾದ್ ನಾಡಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಯ ಅರ್ಧ ಗೋತ್ರದವರ ಬಳಿಗೆ ಯಾಜಕ ಎಲಿಯಾಜರನ ಮಗ ಫೀನೆಹಾಸನನ್ನೂ</verse>
				<verse number="14">ಅವನ ಸಂಗಡ ಇಸ್ರಾಯೇಲಿನ ಗೋತ್ರದ ಪ್ರತಿಯೊಂದು ಗೋತ್ರದಿಂದ ಒಬ್ಬೊಬ್ಬನನ್ನು ಅಂದರೆ ಮುಖ್ಯಸ್ಥನ ಪ್ರಕಾರ ಹತ್ತು ಮಂದಿ ಪ್ರಧಾನರನ್ನೂ ಕಳುಹಿಸಿದರು.</verse>
				<verse number="15">ಇವರು ಗಿಲ್ಯಾದ್ ನಾಡಿನಲ್ಲಿ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಯ ಅರ್ಧ ಗೋತ್ರದವರ ಬಳಿಗೆ ಬಂದು,</verse>
				<verse number="16">“ಯೆಹೋವ ದೇವರ ಸರ್ವ ಸಮೂಹವು ಹೇಳುವುದೇನೆಂದರೆ: ‘ನೀವು ಈ ಹೊತ್ತು ಯೆಹೋವ ದೇವರ ಕಡೆಗೆ ತಿರುಗದೆ, ಅವರಿಗೆ ವಿರೋಧವಾಗಿ ತಿರುಗಿಬೀಳುವ ಹಾಗೆ ನಿಮಗೆ ಒಂದು ಬಲಿಪೀಠವನ್ನು ಕಟ್ಟಿಕೊಂಡು, ಇಸ್ರಾಯೇಲ್ ದೇವರಿಗೆ ಮಾಡಿದ ಈ ಅಪರಾಧವೇನು?</verse>
				<verse number="17">ಪೆಯೋರದವರ ದುಷ್ಟತನವು ನಮಗೆ ಅಲ್ಪವೋ? ಯೆಹೋವ ದೇವರ ಜನರ ಮೇಲೆ ವ್ಯಾಧಿ ಬಂದಿದ್ದರೂ ಈ ದಿನದವರೆಗೂ ಆ ಪಾಪದಿಂದ ನಾವು ಶುದ್ಧವಾಗಲಿಲ್ಲ.</verse>
				<verse number="18">ನೀವು ಈಗ ಯೆಹೋವ ದೇವರ ಕಡೆಯಿಂದ ತಿರುಗಿ ಹೋಗುತ್ತೀರಲ್ಲಾ? “ ‘ಈ ಹೊತ್ತು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬಿದ್ದರೆ, ನಾಳೆ ಅವರು ಇಸ್ರಾಯೇಲ್ ಜನಾಂಗದ ಮೇಲೆ ರೌದ್ರವುಳ್ಳವರಾಗುವರು.</verse>
				<verse number="19">ನೀವು ಸ್ವಾಧೀನಪಡಿಸುವ ನಾಡು ಅಶುದ್ಧವಾಗಿದ್ದರೆ, ಯೆಹೋವ ದೇವರ ಗುಡಾರವಿರುವ ಯೆಹೋವ ದೇವರ ನಾಡಿಗೆ ನೀವು ಬಂದು, ನಮ್ಮ ಮಧ್ಯದಲ್ಲಿ ಸೊತ್ತನ್ನು ತೆಗೆದುಕೊಳ್ಳಿರಿ. ಯೆಹೋವ ದೇವರ ಬಲಿಪೀಠದ ಹೊರತಾಗಿ ನಿಮಗೋಸ್ಕರ ಒಂದು ಬಲಿಪೀಠವನ್ನು ಕಟ್ಟಿಕೊಳ್ಳುವುದರಿಂದ ನೀವು ಯೆಹೋವ ದೇವರಿಗೆ ವಿರೋಧವಾಗಿ ತಿರುಗಿ ಬೀಳಬೇಡಿರಿ. ನಮಗೆ ವಿರೋಧವಾಗಿಯೂ ತಿರುಗಿ ಬೀಳಬೇಡಿರಿ.</verse>
				<verse number="20">ಜೆರಹನ ಮಗ ಆಕಾನನು ಅರ್ಪಿತವಾದ ವಸ್ತುಗಳನ್ನು ಕದ್ದು ಅಪರಾಧವೆಸಗಿದಾಗ ಯೆಹೋವ ದೇವರ ಕೋಪವು ಸಮಸ್ತ ಇಸ್ರಾಯೇಲ್ ಜನರ ಮೇಲೆ ಬಂದಿತು. ಅವನ ಪಾಪದ ದೆಸೆಯಿಂದ ಅವನೊಡನೆ ಇತರರೂ ಸಾಯಬೇಕಾಯಿತು,’ ” ಎಂದು ಹೇಳಿದರು.</verse>
				<verse number="21">ರೂಬೇನ್ಯರೂ ಗಾದ್ಯರೂ ಮನಸ್ಸೆಯ ಅರ್ಧ ಗೋತ್ರದವರೂ ಇಸ್ರಾಯೇಲ್ ಗೋತ್ರಗಳ ಮುಖ್ಯಸ್ಥರಿಗೆ ಉತ್ತರವಾಗಿ,</verse>
				<verse number="22">“ದೇವಾದಿದೇವರಾದ ಯೆಹೋವ ದೇವರು ಇದಕ್ಕೆ ಸಾಕ್ಷಿ, ನಾವು ದೇವಾದಿದೇವರಾದ ಯೆಹೋವ ದೇವರಿಗೆ ವಿರುದ್ಧ ಪಾಪಮಾಡಿದವರಾಗಿದ್ದರೆ ಅಥವಾ ಅವಿಧೇಯರಾಗಿದ್ದರೆ, ಆ ದೇವರು ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.</verse>
				<verse number="23">ನಾವು ಯೆಹೋವ ದೇವರ ಕಡೆಗೆ ತಿರುಗಿಕೊಂಡು ದಹನಬಲಿಗಳನ್ನಾದರೂ, ಧಾನ್ಯ ಸಮರ್ಪಣೆಯನ್ನಾದರೂ, ಸಮಾಧಾನದ ಸಮರ್ಪಣೆಗಳನ್ನಾದರೂ, ಅದರ ಮೇಲೆ ಅರ್ಪಿಸುವುದಕ್ಕೋಸ್ಕರ ಬಲಿಪೀಠವನ್ನು ನಮಗಾಗಿ ಕಟ್ಟಿದ್ದರೆ, ಯೆಹೋವ ದೇವರು ಅದನ್ನು ವಿಚಾರಿಸಲಿ.</verse>
				<verse number="24">“ಒಂದು ವಿಶೇಷವಾದ ಉದ್ದೇಶದಿಂದ ಈ ಕೆಲಸವನ್ನು ಮಾಡಿದೆವು. ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಾಯೇಲ್ ದೇವರಾದ ಯೆಹೋವ ದೇವರಲ್ಲಿ ನಿಮಗೇನು ಪಾಲಿದೆ?</verse>
				<verse number="25">ರೂಬೇನ್ಯರೇ, ಗಾದ್ಯರೇ ಯೆಹೋವ ದೇವರು ನಿಮಗೂ ನಮಗೂ ನಡುವೆ ಯೊರ್ದನ್ ನದಿಯನ್ನು ಮೇರೆಯಾಗಿ ಇಟ್ಟಿದ್ದರಿಂದ ಯೆಹೋವ ದೇವರ ಕಾರ್ಯಗಳಲ್ಲಿ ನಿಮಗೆ ಭಾಗವು ಇಲ್ಲ,’ ಎಂದು ಹೇಳಿ, ನಮ್ಮ ಮಕ್ಕಳನ್ನು ಯೆಹೋವ ದೇವರಿಗೆ ಭಯಪಡದ ಹಾಗೆ ಮಾಡುವರೆಂದು ಅಂಜಿಕೊಂಡು ಇದನ್ನು ಮಾಡಿದೆವು.</verse>
				<verse number="26">“ಆದ್ದರಿಂದ, ‘ನಾವು ಸಿದ್ಧರಾಗಿ ಬಲಿಪೀಠವನ್ನು ಕಟ್ಟೋಣ ಎಂದು ಹೇಳಿದ ಕಾರಣ, ದಹನಬಲಿ ಅಥವಾ ಬೇರೆ ಬಲಿಗಳನ್ನು ಸಮರ್ಪಿಸುವುದಕ್ಕೆ ಅಲ್ಲ.’</verse>
				<verse number="27">ನಮಗೂ ನಿಮಗೂ ನಮ್ಮ ತರುವಾಯ ನಮ್ಮ ಸಂತತಿಯವರಿಗೂ ಮಧ್ಯದಲ್ಲಿ ಒಂದು ಸಾಕ್ಷಿ ಉಂಟಾಗಿರುವಂತೆಯೂ ನಾವು ಯೆಹೋವ ದೇವರ ಸನ್ನಿಧಿಯಲ್ಲಿ ದಹನಬಲಿ, ಸಮಾಧಾನದ ಬಲಿ ಮುಂತಾದವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಗುರುತಾಗಿರುವಂತೆಯೂ, ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಯೆಹೋವ ದೇವರಲ್ಲಿ ನಿಮಗೆ ಭಾಗವಿಲ್ಲ,’ ಎಂದು ಹೇಳದೆ ಇರುವಂತೆಯೂ ಸಾಕ್ಷಿಗಾಗಿ ಕಟ್ಟಿದ್ದೇವೆ ಅಷ್ಟೇ.</verse>
				<verse number="28">“ಇದಲ್ಲದೆ ನಾವು, ‘ಒಂದು ವೇಳೆ ಅವರು ಮುಂದೆ ನಮಗಾಗಲಿ, ನಮ್ಮ ಸಂತತಿಯವರಿಗಾಗಲಿ ಈ ಪ್ರಕಾರ ಹೇಳಿದ್ದೇ ಆದರೆ ನಾವು ಅವರಿಗೆ: ಯೆಹೋವ ದೇವರ ಬಲಿಪೀಠವನ್ನು ಹೋಲುವ ಈ ವೇದಿಕೆಯನ್ನು ನೋಡಿರಿ, ನಮ್ಮ ಪೂರ್ವಜರು ಇದನ್ನು ದಹನಬಲಿ, ಸಮರ್ಪಣ ಬಲಿಗಳನ್ನು ಅರ್ಪಿಸುವುದಕ್ಕಾಗಿ ಕಟ್ಟಲಿಲ್ಲ. ಇದು ನಮಗೂ ನಿಮಗೂ ಮಧ್ಯೆ ಸಾಕ್ಷಿಯಾಗಿದೆಯಷ್ಟೆ,’ ಎಂದು ಹೇಳುವೆವು.</verse>
				<verse number="29">“ಆದರೆ ನಮ್ಮ ದೇವರಾದ ಯೆಹೋವ ದೇವರ ಗುಡಾರದ ಮುಂದೆ ಇರುವ ಅವರ ಯಜ್ಞವೇದಿಯನ್ನು ಅಲ್ಲದೆ ನಾವು ದಹನಬಲಿ, ಧಾನ್ಯ ನೈವೇದ್ಯ ಮತ್ತು ಇತರ ಬಲಿಗೋಸ್ಕರವಾಗಿಯೂ ಮತ್ತೊಂದು ಬಲಿಪೀಠವನ್ನು ಕಟ್ಟಿ, ಯೆಹೋವ ದೇವರಿಗೆ ವಿರೋಧವಾಗಿ ವಿಮುಖರಾಗಿ ತಿರುಗಿಬೀಳುವುದು ನಮಗೆ ದೂರವಾಗಿರಲಿ,” ಎಂದರು.</verse>
				<verse number="30">ಯಾಜಕನಾದ ಫೀನೆಹಾಸನೂ ಅವನ ಸಂಗಡ ಇದ್ದ ಸಭೆಯ ಪ್ರಧಾನರೂ ಇಸ್ರಾಯೇಲ್ ಗೋತ್ರಗಳ ಮುಖ್ಯಸ್ಥರೂ ರೂಬೇನ್, ಗಾದ್ ಹಾಗೂ ಮನಸ್ಸೆಯ ಗೋತ್ರದವರು ಹೇಳಿದ ಮಾತುಗಳನ್ನು ಕೇಳಿದಾಗ ಅವರಿಗೆ ಮೆಚ್ಚಿಕೆಯಾಯಿತು.</verse>
				<verse number="31">ಯಾಜಕನಾಗಿರುವ ಎಲಿಯಾಜರನ ಪುತ್ರ ಫೀನೆಹಾಸನು ರೂಬೇನ್, ಗಾದ್ ಹಾಗೂ ಮನಸ್ಸೆಯ ಗೋತ್ರದವರಿಗೆ, “ನೀವು ಯೆಹೋವ ದೇವರಿಗೆ ವಿರುದ್ಧವಾಗಿ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಅವರು ನಮ್ಮ ಮಧ್ಯದಲ್ಲಿರುತ್ತಾರೆಂಬುದು ಈಗ ನಮಗೆ ತಿಳಿಯಿತು. ಹೀಗಿರಲಾಗಿ ನೀವು ಇಸ್ರಾಯೇಲರನ್ನು ಯೆಹೋವ ದೇವರ ಶಿಕ್ಷಾಹಸ್ತದಿಂದ ತಪ್ಪಿಸಿದ್ದೀರಿ,” ಎಂದನು.</verse>
				<verse number="32">ಯಾಜಕನಾದ ಎಲಿಯಾಜರನ ಮಗ ಫೀನೆಹಾಸನೂ ಪ್ರಧಾನರೂ ಗಿಲ್ಯಾದ್ ದೇಶದಲ್ಲಿರುವ ರೂಬೇನ್ಯರನ್ನೂ ಗಾದ್ಯರನ್ನೂ ಬಿಟ್ಟು ಕಾನಾನ್ ದೇಶದಲ್ಲಿರುವ ಇಸ್ರಾಯೇಲರ ಬಳಿಗೆ ತಿರುಗಿಬಂದು, ಅವರಿಗೆ ವರ್ತಮಾನವನ್ನು ತಿಳಿಸಿದರು.</verse>
				<verse number="33">ಆ ಮಾತನ್ನು ಇಸ್ರಾಯೇಲರು ಕೇಳಿ ಸಂತೋಷಪಟ್ಟು ದೇವರನ್ನು ಕೊಂಡಾಡಿದರು. ಆದ್ದರಿಂದ ಅವರು ರೂಬೇನ್ಯರೂ ಗಾದ್ಯರೂ ನಿವಾಸವಾಗಿದ್ದ ನಾಡಿನ ಮೇಲೆ ಯುದ್ಧಮಾಡಿ ಅವರನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟರು.</verse>
				<verse number="34">ರೂಬೇನ್ಯರೂ ಗಾದ್ಯರೂ ಆ ಬಲಿಪೀಠಕ್ಕೆ, “ನಮ್ಮ ನಡುವೆ ಯೆಹೋವ ದೇವರೇ ದೇವರಾಗಿದ್ದಾರೆ ಎಂಬುದಕ್ಕೆ ಸಾಕ್ಷಿ, ” ಎಂದು ಹೆಸರಿಟ್ಟರು.</verse>
			</chapter>
			<chapter number="23">
				<verse number="1">ಯೆಹೋವ ದೇವರು ಇಸ್ರಾಯೇಲರನ್ನು ಸುತ್ತಲಿರುವ ಎಲ್ಲಾ ಶತ್ರುಗಳಿಂದ ತಪ್ಪಿಸಿ, ಅವರಿಗೆ ವಿಶ್ರಾಂತಿಕೊಟ್ಟ ಬಹಳ ದಿವಸಗಳ ತರುವಾಯ ಯೆಹೋಶುವನ ದಿವಸಗಳು ಗತಿಸಿ ವೃದ್ಧನಾದನು.</verse>
				<verse number="2">ಒಂದು ದಿನ ಅವನು ಸಮಸ್ತ ಇಸ್ರಾಯೇಲರನ್ನೂ ಅವರ ಹಿರಿಯರನ್ನೂ ಅವರ ಮುಖ್ಯಸ್ಥರನ್ನೂ ಅವರ ನ್ಯಾಯಾಧಿಪತಿಗಳನ್ನೂ ಅವರ ಅಧಿಕಾರಿಗಳನ್ನೂ ಕರೆಯಿಸಿ ಅವರಿಗೆ, “ನಾನು ದಿನತುಂಬಿದ ವೃದ್ಧನಾಗಿದ್ದೇನೆ.</verse>
				<verse number="3">ಆದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೋಸ್ಕರ ಈ ಸಕಲ ಜನಾಂಗಗಳಿಗೆ ಮಾಡಿದ ಎಲ್ಲವನ್ನೂ ನೋಡಿದ್ದೀರಿ. ನಿಮಗೋಸ್ಕರವಾಗಿ ಯುದ್ಧ ಮಾಡಿದವರು ನಿಮ್ಮ ದೇವರಾದ ಯೆಹೋವ ದೇವರು.</verse>
				<verse number="4">ನಾನು ಯೊರ್ದನ್ ನದಿ ಮೊದಲುಗೊಂಡು ಪಶ್ಚಿಮಕ್ಕಿರುವ ಮೆಡಿಟೆರೆನಿಯನ್ ಸಮುದ್ರದವರೆಗೂ ರಾಷ್ಟ್ರಗಳನ್ನು ಸೋಲಿಸಿ, ಉಳಿದ ಸಕಲ ನಾಡನ್ನು ನಿಮ್ಮ ಗೋತ್ರಗಳಿಗೆ ಸೊತ್ತಾಗಿ ಕೊಟ್ಟಿದ್ದೇನೆ.</verse>
				<verse number="5">ಇದಲ್ಲದೆ ನಿಮ್ಮ ದೇವರಾದ ಯೆಹೋವ ದೇವರು ಉಳಿದವರನ್ನು ನಿಮ್ಮ ಮುಂದೆ ತಳ್ಳಿಬಿಟ್ಟು, ನಿಮ್ಮ ಕಣ್ಣೆದುರಿನಿಂದ ಅವರನ್ನು ಹೊರಡಿಸಿ ಬಿಡುವರು. ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಹಾಗೆಯೇ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ.</verse>
				<verse number="6">“ನೀವು ಬಲಗೊಳ್ಳಿರಿ, ಎಡಕ್ಕಾಗಲಿ, ಬಲಕ್ಕಾಗಲಿ ತಿರುಗದೆ, ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವ ಎಲ್ಲವನ್ನು ಕೈಗೊಂಡು ನಡೆಯಿರಿ.</verse>
				<verse number="7">ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರಿಕೊಳ್ಳಬೇಡಿರಿ. ಅವರ ದೇವರುಗಳ ಹೆಸರುಗಳನ್ನು ಸ್ಮರಿಸಲೂ ಬೇಡಿರಿ. ಅವುಗಳ ಮೇಲೆ ಆಣೆಯೂ ಇಡಬೇಡಿರಿ. ಅವುಗಳಿಗೆ ಆರಾಧನೆ ಮಾಡಬಾರದು. ಅಡ್ಡಬೀಳಲೂಬಾರದು.</verse>
				<verse number="8">ಆದರೆ, ಈವರೆಗೂ ಹೇಗೋ ಹಾಗೆಯೇ ಇನ್ನು ಮುಂದೆಯೂ ನಿಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿರಿ.</verse>
				<verse number="9">“ಯೆಹೋವ ದೇವರು ನಿಮ್ಮ ಮುಂದೆ ಬಲವಾದ ದೊಡ್ಡ ರಾಷ್ಟ್ರಗಳನ್ನು ಸಹ ಹೊರಡಿಸಿಬಿಟ್ಟರು. ನಿಮ್ಮ ಮುಂದೆ ಈವರೆಗೂ ಒಬ್ಬರಾದರೂ ನಿಲ್ಲಲಾರದೆ ಹೋದರು.</verse>
				<verse number="10">ನಿಮ್ಮ ದೇವರಾದ ಯೆಹೋವ ದೇವರು ತಮ್ಮ ವಾಗ್ದಾನದಂತೆಯೇ ನಿಮಗೋಸ್ಕರ ಯುದ್ಧ ಮಾಡಿದ್ದರಿಂದ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವುದಕ್ಕೆ ಶಕ್ತನಾದನು.</verse>
				<verse number="11">ಹೀಗಿರುವುದರಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಂಡು ನಿಮ್ಮ ದೇವರಾದ ಯೆಹೋವ ದೇವರನ್ನೇ ಪ್ರೀತಿಸಿರಿ.</verse>
				<verse number="12">“ಆದರೆ, ನೀವು ದೇವರಿಂದ ತಿರುಗಿಕೊಂಡು ನಿಮ್ಮಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರಿಕೊಂಡು ಅವರೊಂದಿಗೆ ಮದುವೆ ಮಾಡಿಕೊಟ್ಟರೆ, ನೀವು ಅವರ ಬಳಿಗೂ ಅವರು ನಿಮ್ಮ ಬಳಿಗೂ ಪ್ರವೇಶಿಸಿದರೆ,</verse>
				<verse number="13">ನಿಮ್ಮ ದೇವರಾದ ಯೆಹೋವ ದೇವರು ಇನ್ನು ಮೇಲೆ ಈ ಜನಾಂಗಗಳನ್ನು ನಿಮ್ಮ ಮುಂದೆ ಹೊರಡಿಸಿಬಿಡುವುದಿಲ್ಲ. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನೊಳಗಿಂದ ನೀವು ನಾಶವಾಗುವವರೆಗೂ ಅವರು ನಿಮಗೆ ಉರುಲೂ ಬೋನೂ ಆಗಿರುವರು. ಇದಲ್ಲದೆ ದೇವರು ನಿಮ್ಮ ಪಕ್ಕೆಯಲ್ಲಿ ಶೂಲವಾಗಿಯೂ ನಿಮ್ಮ ಕಣ್ಣುಗಳಿಗೆ ಮುಳ್ಳುಗಳಾಗಿಯೂ ಇರುವರೆಂದು ನಿಶ್ಚಯವಾಗಿ ತಿಳಿದುಕೊಳ್ಳುವಿರಿ.</verse>
				<verse number="14">“ಭೂನಿವಾಸಿಗಳೆಲ್ಲರು ಹೋಗುವ ಮಾರ್ಗವಾಗಿ ಇಂದು ನಾನು ಹೋಗಬೇಕಾಗಿದೆ. ನಿಮ್ಮ ದೇವರಾದ ಯೆಹೋವ ದೇವರು ನಿಮಗೋಸ್ಕರ ಹೇಳಿದ ಎಲ್ಲಾ ಒಳ್ಳೆಯ ವಾಗ್ದಾನಗಳಲ್ಲಿ ಒಂದೂ ತಪ್ಪಲಿಲ್ಲವೆಂದು ನಿಮ್ಮ ಪೂರ್ಣಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಅರಿತಿದ್ದೀರಿ. ಅವುಗಳಲ್ಲಿ ಒಂದು ಮಾತಾದರೂ ತಪ್ಪದೆ ಅವೆಲ್ಲಾ ನಿಮಗೆ ಸಂಭವಿಸಿದವು.</verse>
				<verse number="15">ಈಗ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ವಾಗ್ದಾನ ಮಾಡಿದ ಒಳ್ಳೆಯ ಕಾರ್ಯಗಳೆಲ್ಲಾ ನಿಮಗೆ ಹೇಗೆ ಸಂಭವಿಸಿದವೋ</verse>
				<verse number="16">ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯನ್ನು ನೀವು ಉಲ್ಲಂಘಿಸಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಕೊಟ್ಟ ಈ ಒಳ್ಳೆಯ ದೇಶದಿಂದ ನಿಮ್ಮನ್ನು ನಾಶಮಾಡುವ ಮಟ್ಟಿಗೂ ಅವರು ನಿಮ್ಮ ಮೇಲೆ ಸಕಲ ಕೇಡುಗಳನ್ನು ಬರಮಾಡುವರು. ಯೆಹೋವ ದೇವರ ಕೋಪವು ನಿಮ್ಮ ಮೇಲೆ ಉರಿಯುವುದು. ಅವರು ನಿಮಗೆ ಕೊಟ್ಟ ಒಳ್ಳೆಯ ದೇಶದಿಂದ ನೀವು ಬೇಗನೆ ನಾಶವಾಗಿಹೋಗುವಿರಿ,” ಎಂದನು.</verse>
			</chapter>
			<chapter number="24">
				<verse number="1">ಅನಂತರ ಯೆಹೋಶುವನು ಶೆಕೆಮಿನಲ್ಲಿ ಇಸ್ರಾಯೇಲಿನ ಸಮಸ್ತ ಗೋತ್ರದವರನ್ನು ಕೂಡಿಸಿ, ಇಸ್ರಾಯೇಲಿನ ಹಿರಿಯರನ್ನೂ ಅವರ ಮುಖ್ಯಸ್ಥರನ್ನೂ ಅವರ ನ್ಯಾಯಾಧಿಪತಿಗಳನ್ನೂ ಅವರ ಅಧಿಕಾರಿಗಳನ್ನೂ ಕರೆಯಿಸಿದನು. ಅವರು ದೇವರ ಮುಂದೆ ಬಂದು ನಿಂತರು.</verse>
				<verse number="2">ಯೆಹೋಶುವನು ಅವರೆಲ್ಲರಿಗೂ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ‘ಪೂರ್ವದಲ್ಲಿ ನಿಮ್ಮ ಮೂಲ ಪುರುಷರಾದ ಅಬ್ರಹಾಮನಿಗೂ ನಾಹೋರನಿಗೂ ತಂದೆಯಾದ ತೆರಹನು ಯೂಫ್ರೇಟೀಸ್ ನದಿಯ ಆಚೆ ವಾಸವಾಗಿದ್ದಾಗ ಅವರೆಲ್ಲರೂ ಅನ್ಯದೇವರುಗಳನ್ನು ಆರಾಧಿಸುತ್ತಿದ್ದರು.</verse>
				<verse number="3">ಆದರೆ ನಾನು ಯೂಫ್ರೇಟೀಸ್ ನದಿಯ ಆಚೆಯಲ್ಲಿ ಇದ್ದ ನಿಮ್ಮ ತಂದೆಯಾದ ಅಬ್ರಹಾಮನನ್ನು ಕರೆದುಕೊಂಡು ಬಂದು, ಅವನನ್ನು ಕಾನಾನ್ ದೇಶವನ್ನೆಲ್ಲಾ ಸಂಚಾರ ಮಾಡಿಸಿ, ಅವನ ಸಂತಾನವನ್ನು ಅಭಿವೃದ್ಧಿ ಮಾಡಿದೆನು. ಅವನಿಗೆ ಇಸಾಕನನ್ನು ಕೊಟ್ಟೆನು.</verse>
				<verse number="4">ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯೀರ್ ಪರ್ವತದ ನಾಡನ್ನು ಸೊತ್ತಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಈಜಿಪ್ಟಿಗೆ ಹೋದರು.</verse>
				<verse number="5">“ ‘ನಾನು ಮೋಶೆಯನ್ನೂ ಆರೋನನನ್ನೂ ಕಳುಹಿಸಿ, ಅವರ ಮಧ್ಯದಲ್ಲಿ ನಾನು ಮಾಡಿದವುಗಳ ಪ್ರಕಾರ ಈಜಿಪ್ಟನ್ನು ಬಾಧಿಸಿದೆನು. ತರುವಾಯ ನಿಮ್ಮನ್ನು ಹೊರಗೆ ತಂದೆನು.</verse>
				<verse number="6">ನಾನು ನಿಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಹೊರಡಿಸಿದಾಗ ನೀವು ಸಮುದ್ರದ ತೀರಕ್ಕೆ ಬಂದಿರಿ. ಆದರೆ ಈಜಿಪ್ಟಿನವರು ರಥಗಳ ಮತ್ತು ರಾಹುತರ ಸಂಗಡ ನಿಮ್ಮ ಪೂರ್ವಜರನ್ನು ಕೆಂಪು ಸಮುದ್ರದವರೆಗೂ ಹಿಂದಟ್ಟಿದರು.</verse>
				<verse number="7">ಆಗ, ಅವರು ಯೆಹೋವ ದೇವರಾಗಿರುವ ನನಗೆ ಕೂಗಿದಾಗ ನಾನು ನಿಮಗೂ ಈಜಿಪ್ಟಿನವರಿಗೂ ಮಧ್ಯದಲ್ಲಿ ಅಂಧಕಾರವನ್ನು ಇಟ್ಟು, ಸಮುದ್ರವನ್ನು ಅವರ ಮೇಲೆ ಬರಮಾಡಿ, ಅವರನ್ನು ಮುಚ್ಚಿಬಿಟ್ಟೆನು.</verse>
				<verse number="8">“ ‘ನಾನು ಈಜಿಪ್ಟಿನಲ್ಲಿ ಮಾಡಿದ್ದನ್ನು ನಿಮ್ಮ ಕಣ್ಣುಗಳು ಕಂಡವು. ಮರುಭೂಮಿಯಲ್ಲಿ ಬಹುಕಾಲದವರೆಗೆ ವಾಸವಾಗಿದ್ದೀರಿ. ಅನಂತರ ಯೊರ್ದನ್ ನದಿ ಆಚೆ ವಾಸವಾಗಿದ್ದ ಅಮೋರಿಯರ ದೇಶಕ್ಕೆ ನಿಮ್ಮನ್ನು ಕರೆದುಕೊಂಡು ಬಂದೆನು. ಅವರು ನಿಮ್ಮ ಸಂಗಡ ಯುದ್ಧಮಾಡುವಾಗ ಅವರ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವ ಹಾಗೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿ, ಅವರನ್ನು ನಿಮ್ಮ ಎದುರಿನಿಂದ ನಾಶಮಾಡಿದೆನು.</verse>
				<verse number="9">ಆಗ ಮೋವಾಬ್ಯರ ಅರಸನಾದ ಚಿಪ್ಪೋರನ ಮಗನಾದ ಬಾಲಾಕನು ಎದ್ದು, ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಿ ನಿಮ್ಮನ್ನು ಶಪಿಸುವ ಹಾಗೆ ಬೆಯೋರನ ಮಗನಾದ ಬಿಳಾಮನನ್ನು ಕರೆಕಳುಹಿಸಿದನು.</verse>
				<verse number="10">ಆದರೆ ನಾನು ಬಿಳಾಮನ ಮಾತನ್ನು ಕೇಳಲು ಮನಸ್ಸಿಲ್ಲದ್ದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಾನು ಅವನ ಕೈಯಿಂದ ನಿಮ್ಮನ್ನು ತಪ್ಪಿಸಿದೆನು.</verse>
				<verse number="11">“ ‘ನೀವು ಯೊರ್ದನ್ ನದಿಯನ್ನು ದಾಟಿ ಯೆರಿಕೋವಿಗೆ ಬಂದಿರಿ. ಯೆರಿಕೋವಿನ ನಿವಾಸಿಗಳೂ ನಿಮ್ಮ ಸಂಗಡ ಯುದ್ಧಮಾಡಿದರು. ಹಾಗೆಯೇ ಅಮೋರಿಯರೂ ಪೆರಿಜೀಯರೂ ಕಾನಾನ್ಯರೂ ಹಿತ್ತಿಯರೂ ಗಿರ್ಗಾಷಿಯರೂ ಹಿವ್ವಿಯರೂ ಯೆಬೂಸಿಯರೂ ನಿಮ್ಮ ಸಂಗಡ ಯುದ್ಧಮಾಡಿದರು. ಆದರೆ ನಾನು ಅವರನ್ನು ನಿಮ್ಮ ಕೈಗೆ ಒಪ್ಪಿಸಿದೆನು.</verse>
				<verse number="12">ಇದಲ್ಲದೆ ನಾನು ನಿಮ್ಮ ಮುಂದೆ ಕಡಜದ ಹುಳಗಳನ್ನು ಕಳುಹಿಸಿದೆನು. ಅವು ಅವರನ್ನೂ ಅಮೋರಿಯರ ಇಬ್ಬರು ಅರಸರನ್ನೂ ನಿಮ್ಮ ಮುಂದೆ ಓಡಿಸಿಬಿಟ್ಟವು. ಇದು ಆದದ್ದು ನಿಮ್ಮ ಖಡ್ಗದಿಂದಲ್ಲಾ, ನಿಮ್ಮ ಬಿಲ್ಲಿನಿಂದಲ್ಲಾ.</verse>
				<verse number="13">ನೀವು ವ್ಯವಸಾಯಮಾಡದ ಭೂಮಿಯನ್ನೂ ನೀವು ಕಟ್ಟದ ಪಟ್ಟಣಗಳನ್ನೂ ನಾನು ನಿಮಗೆ ಕೊಟ್ಟೆನು. ನೀವು ಅವುಗಳಲ್ಲಿ ವಾಸವಾಗಿದ್ದೀರಿ. ನೀವು ನೆಟ್ಟು ಬೆಳೆಸದ ದ್ರಾಕ್ಷಿತೋಟಗಳ ಫಲವನ್ನೂ ಹಿಪ್ಪೆತೋಪುಗಳ ಫಲವನ್ನೂ ಅನುಭವಿಸುತ್ತಿದ್ದೀರಿ,’ ಎಂಬುದೇ.</verse>
				<verse number="14">“ಆದ್ದರಿಂದ ನೀವು ಈಗ ಯೆಹೋವ ದೇವರಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಅವರನ್ನು ಸೇವಿಸಿರಿ. ನಿಮ್ಮ ಪೂರ್ವಜರು ಯೂಫ್ರೇಟೀಸ್ ನದಿಯ ಆಚೆಯಲ್ಲಿಯೂ ಈಜಿಪ್ಟಿನಲ್ಲಿಯೂ ಸೇವಿಸಿದ ದೇವರುಗಳನ್ನು ತೊರೆದುಬಿಟ್ಟು ಯೆಹೋವ ದೇವರನ್ನೇ ನೀವು ಸೇವಿಸಿರಿ.</verse>
				<verse number="15">ಯೆಹೋವ ದೇವರನ್ನು ಸೇವಿಸುವುದು ನಿಮಗೆ ಇಷ್ಟವಿಲ್ಲದಿದ್ದರೆ, ಈ ಹೊತ್ತು ನೀವು ಯಾರನ್ನು ಸೇವಿಸಬೇಕೆಂದಿದ್ದೀರಿ? ನಿಮ್ಮ ಪಿತೃಗಳು ಯೂಫ್ರೇಟೀಸ್ ನದಿಯ ಆಚೆ ಸೇವಿಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆಯ್ದುಕೊಳ್ಳಿರಿ. ಆದರೆ ನಾನೂ ನನ್ನ ಮನೆಯವರೂ ಯೆಹೋವ ದೇವರನ್ನೇ ಸೇವಿಸುವೆವು,” ಎಂದನು.</verse>
				<verse number="16">ಜನರು ಯೆಹೋಶುವನಿಗೆ ಉತ್ತರವಾಗಿ, “ನಾವು ಯೆಹೋವ ದೇವರನ್ನು ಬಿಟ್ಟು ಅನ್ಯದೇವತೆಗಳನ್ನು ಸೇವಿಸುವ ಕಾರ್ಯವು ನಮಗೆ ದೂರವಾಗಿರಲಿ.</verse>
				<verse number="17">ಏಕೆಂದರೆ ನಮ್ಮ ದೇವರಾದ ಯೆಹೋವ ದೇವರು ತಾವೇ ನಮ್ಮನ್ನೂ ನಮ್ಮ ಪಿತೃಗಳನ್ನೂ ದಾಸತ್ವದ ಮನೆಯಾದ ಈಜಿಪ್ಟ್ ದೇಶದಿಂದ ಬರಮಾಡಿ, ನಮ್ಮ ಕಣ್ಣುಗಳ ಮುಂದೆ ಆ ಅದ್ಭುತ ಸೂಚಕಕಾರ್ಯಗಳನ್ನು ಮಾಡಿ, ನಾವು ನಡೆದ ಎಲ್ಲಾ ಮಾರ್ಗಗಳಲ್ಲಿಯೂ ನಾವು ಅವರ ಮಧ್ಯದಲ್ಲಿ ಹಾದು ಬಂದ ಎಲ್ಲಾ ಜನಗಳಲ್ಲಿಯೂ ನಮ್ಮನ್ನು ಕಾಪಾಡಿದವರು.</verse>
				<verse number="18">ಇದಲ್ಲದೆ ದೇಶದಲ್ಲಿ ವಾಸವಾಗಿದ್ದ ಅಮೋರಿಯರ ಸಕಲ ಜನರನ್ನು ಯೆಹೋವ ದೇವರು ನಮ್ಮ ಮುಂದೆ ಹೊರಡಿಸಿಬಿಟ್ಟರು. ಆದ್ದರಿಂದ ನಾವು ಯೆಹೋವ ದೇವರನ್ನೇ ಸೇವಿಸುವೆವು. ಏಕೆಂದರೆ ಅವರು ನಮ್ಮ ದೇವರು,” ಎಂದರು.</verse>
				<verse number="19">ಅದಕ್ಕೆ ಯೆಹೋಶುವನು ಜನರಿಗೆ, “ನೀವು ಯೆಹೋವ ದೇವರನ್ನು ಸೇವಿಸಲಾರಿರಿ. ಏಕೆಂದರೆ ಅವರು ಪರಿಶುದ್ಧ ದೇವರು, ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ತೀಕ್ಷ್ಣ ದೇವರು. ಅವರು ನಿಮ್ಮ ದ್ರೋಹಗಳನ್ನೂ ಪಾಪಗಳನ್ನೂ ಮನ್ನಿಸರು.</verse>
				<verse number="20">ನೀವು ಯೆಹೋವ ದೇವರನ್ನು ಬಿಟ್ಟು, ಅನ್ಯದೇವರುಗಳನ್ನು ಸೇವಿಸಿದರೆ, ಅವರು ನಿಮಗೆ ಒಳ್ಳೆಯದನ್ನು ಮಾಡದೆ ಕೇಡನ್ನು ಬರಮಾಡಿ ನಿಮ್ಮನ್ನು ದಹಿಸಿಬಿಡುವರು,” ಎಂದು ಹೇಳಿದನು.</verse>
				<verse number="21">ಅದಕ್ಕೆ ಜನರು ಯೆಹೋಶುವನಿಗೆ, “ಇಲ್ಲ! ನಾವು ಯೆಹೋವ ದೇವರನ್ನೇ ಸೇವಿಸುವೆವು,” ಎಂದರು.</verse>
				<verse number="22">ಅದಕ್ಕೆ ಯೆಹೋಶುವನು ಜನರಿಗೆ, “ನೀವು ಯೆಹೋವ ದೇವರನ್ನು ಸೇವಿಸುವುದಕ್ಕೆ ಅವರನ್ನು ಆಯ್ದುಕೊಂಡಿರುವಿರೆಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ,” ಎಂದನು. ಅದಕ್ಕವರು, “ಹೌದು, ನಾವೇ ಸಾಕ್ಷಿಗಳಾಗಿದ್ದೇವೆ,” ಎಂದರು.</verse>
				<verse number="23">ಆಗ ಯೆಹೋಶುವನು ಅವರಿಗೆ, “ಹಾಗಾದರೆ, ಈಗ ನಿಮ್ಮ ಮಧ್ಯದಲ್ಲಿರುವ ಅನ್ಯದೇವರುಗಳನ್ನು ತೊರೆದು, ನಿಮ್ಮ ಹೃದಯವನ್ನು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಸಿರಿ,” ಎಂದನು.</verse>
				<verse number="24">ಜನರು ಯೆಹೋಶುವನಿಗೆ, “ನಾವು ನಮ್ಮ ದೇವರಾದ ಯೆಹೋವ ದೇವರಿಗೆ ಸೇವೆಸಲ್ಲಿಸಿ, ಅವರ ಮಾತಿಗೆ ವಿಧೇಯರಾಗುವೆವು,” ಎಂದರು.</verse>
				<verse number="25">ಯೆಹೋಶುವನು ಆ ಹೊತ್ತು ಶೆಕೆಮಿನಲ್ಲಿ ಜನರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಅವರಿಗೆ ನಿಯಮವಾಗಿಯೂ ಕಟ್ಟಳೆಯಾಗಿಯೂ ಇಟ್ಟನು.</verse>
				<verse number="26">ಈ ಮಾತುಗಳನ್ನು ಯೆಹೋಶುವನು ದೇವರ ನಿಯಮದ ಗ್ರಂಥದಲ್ಲಿ ಬರೆದು, ಒಂದು ದೊಡ್ಡ ಕಲ್ಲನ್ನು ಎತ್ತಿ, ಅದನ್ನು ಯೆಹೋವ ದೇವರ ಪರಿಶುದ್ಧಸ್ಥಳದ ಬಳಿಯಲ್ಲಿ ಇದ್ದ ಏಲಾ ಮರದ ಕೆಳಗೆ ನೆಟ್ಟನು.</verse>
				<verse number="27">ಯೆಹೋಶುವನು ಜನರಿಗೆ, “ಇಗೋ, ಈ ಕಲ್ಲು ನಿಮ್ಮ ಮಧ್ಯದಲ್ಲಿ ಸಾಕ್ಷಿಯಾಗಿರಲಿ. ಏಕೆಂದರೆ ಇದು ಯೆಹೋವ ದೇವರು ನಮ್ಮ ಸಂಗಡ ಹೇಳಿದ ಎಲ್ಲಾ ವಚನಗಳನ್ನು ಕೇಳಿದೆ. ಆದ್ದರಿಂದ ನೀವು ನಿಮ್ಮ ದೇವರನ್ನು ಅಲ್ಲಗಳೆಯದ ಹಾಗೆ ಇದೇ ನಿಮಗೆ ಸಾಕ್ಷಿಯಾಗಿರಲಿ,” ಎಂದು ಹೇಳಿದನು.</verse>
				<verse number="28">ಹೀಗೆ ಯೆಹೋಶುವನು ಜನರನ್ನು ಅವರವರ ಸೊತ್ತಿನ ಕಡೆಗೆ ಕಳುಹಿಸಿಬಿಟ್ಟನು.</verse>
				<verse number="29">ಇವುಗಳಾದ ತರುವಾಯ ನೂನನ ಮಗ ಯೆಹೋಶುವನೆಂಬ ಯೆಹೋವ ದೇವರ ಸೇವಕನು ನೂರಹತ್ತು ವರುಷ ವಯಸ್ಸಿನವನಾಗಿ ಮರಣಹೊಂದಿದನು.</verse>
				<verse number="30">ಅವನನ್ನು ಎಫ್ರಾಯೀಮ್ ಪರ್ವತದ ಗಾಷ್ ಬೆಟ್ಟದ ಉತ್ತರಕ್ಕಿರುವ ತಿಮ್ನತ್ ಸೆರಹ ಎಂಬ ಅವನ ಸೊತ್ತಿನ ಮೇರೆಯಲ್ಲಿ ಹೂಳಿಟ್ಟರು.</verse>
				<verse number="31">ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವ ದೇವರು ಇಸ್ರಾಯೇಲರಿಗೋಸ್ಕರ ಮಾಡಿದ ಎಲ್ಲ ಮಹತ್ಕಾರ್ಯಗಳನ್ನು ಅರಿತಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವ ದೇವರನ್ನು ಸೇವಿಸಿದರು.</verse>
				<verse number="32">ಇಸ್ರಾಯೇಲರು ಈಜಿಪ್ಟಿನಿಂದ ತಂದ ಯೋಸೇಫನ ಎಲುಬುಗಳನ್ನು ಶೆಕೆಮ್ ಊರಿನ ಹೊಲದಲ್ಲಿ ಹೂಳಿಟ್ಟರು. ಈ ಹೊಲವನ್ನು ಯಾಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿ ನಾಣ್ಯಗಳನ್ನು ಕೊಟ್ಟು ಕೊಂಡುಕೊಂಡಿದ್ದನು. ಅದು ಯೋಸೇಫ್ಯರ ಸೊತ್ತಾಗಿತ್ತು.</verse>
				<verse number="33">ಆರೋನನ ಮಗ ಎಲಿಯಾಜರನೂ ಮರಣಹೊಂದಿದನು. ಅವನನ್ನು ಅವನ ಮಗ ಫೀನೆಹಾಸನಿಗೆ ಎಫ್ರಾಯೀಮ್ ಬೆಟ್ಟದ ದೇಶದಲ್ಲಿ ಕೊಡಲಾದ ಗಿಬೆಯದಲ್ಲಿ ಸಮಾಧಿಮಾಡಿದರು.</verse>
			</chapter>
		</book>
		<book number="7">
			<chapter number="1">
				<verse number="1">ಯೆಹೋಶುವನು ಮರಣ ಹೊಂದಿದ ಬಳಿಕ ಇಸ್ರಾಯೇಲರು, “ಕಾನಾನ್ಯರೊಡನೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವ ದೇವರನ್ನು ಕೇಳಿದರು.</verse>
				<verse number="2">ಅದಕ್ಕೆ ಯೆಹೋವ ದೇವರು, “ಯೆಹೂದ ಗೋತ್ರದವರು ಹೋಗಲಿ; ನಾನು ಆ ದೇಶವನ್ನು ಇವರ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ,” ಎಂದರು.</verse>
				<verse number="3">ಯೆಹೂದ ಗೋತ್ರದವರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ, “ನೀವು ನಮ್ಮ ಸಂಗಡ ನಮ್ಮ ಪ್ರಾಂತಕ್ಕೆ ಬನ್ನಿರಿ, ಕಾನಾನ್ಯರ ಮೇಲೆ ಯುದ್ಧ ಮಾಡೋಣ. ಹಾಗೆಯೇ ನಾವು ನಿಮ್ಮ ಸಂಗಡ ನಿಮ್ಮ ಪ್ರಾಂತಕ್ಕೆ ಬರುತ್ತೇವೆ,” ಎಂದರು. ಹೀಗೆ ಸಿಮೆಯೋನ್ಯರು ಅವರ ಸಂಗಡ ಹೋದರು.</verse>
				<verse number="4">ಯೆಹೂದ ಗೋತ್ರದವರು ಹೋದಾಗ, ಯೆಹೋವ ದೇವರು ಕಾನಾನ್ಯರನ್ನೂ ಪೆರಿಜೀಯರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಬೆಜೆಕಿನಲ್ಲಿ ಹತ್ತು ಸಾವಿರ ಜನರನ್ನು ಕೊಂದರು.</verse>
				<verse number="5">ಅವರು ಬೆಜೆಕಿನಲ್ಲಿ ಅರಸನಾದ ಅದೋನೀಬೆಜೆಕನನ್ನು ಸಂಧಿಸಿ, ಅವನ ವಿರೋಧವಾಗಿ ಯುದ್ಧಮಾಡಿ, ಕಾನಾನ್ಯರನ್ನೂ ಪೆರಿಜೀಯರನ್ನೂ ಕೊಂದುಹಾಕಿದರು.</verse>
				<verse number="6">ಆದರೆ ಅದೋನೀಬೆಜೆಕನು ಓಡಿ ಹೋದದ್ದರಿಂದ, ಅವನನ್ನು ಹಿಂದಟ್ಟಿ ಹಿಡಿದು, ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.</verse>
				<verse number="7">ಆಗ ಅದೋನೀಬೆಜೆಕನು, “ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟ ಎಪ್ಪತ್ತು ಮಂದಿ ಅರಸರು, ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು. ನಾನು ಅವರಿಗೆ ಮಾಡಿದಂತೆಯೇ, ದೇವರು ನನಗೆ ಮಾಡಿದ್ದಾರೆ,” ಎಂದನು. ಅವರು ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಲ್ಲಿ ಅವನು ಮರಣಹೊಂದಿದನು.</verse>
				<verse number="8">ಯೆಹೂದ ಗೋತ್ರದವರು ಯೆರೂಸಲೇಮಿನವರ ಮೇಲೆ ಯುದ್ಧಮಾಡಿ, ಅಲ್ಲಿದ್ದವರನ್ನು ಖಡ್ಗದಿಂದ ಸಂಹರಿಸಿ, ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.</verse>
				<verse number="9">ತರುವಾಯ ಯೆಹೂದ ಗೋತ್ರದವರು ಬೆಟ್ಟದಲ್ಲಿಯೂ ದಕ್ಷಿಣದಲ್ಲಿಯೂ ತಗ್ಗಿನಲ್ಲಿಯೂ ವಾಸಿಸಿದ ಕಾನಾನ್ಯರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೋದರು.</verse>
				<verse number="10">ಯೆಹೂದ ಗೋತ್ರದವರು ಪೂರ್ವದಲ್ಲಿ ಕಿರ್ಯತ್ ಅರ್ಬ ಎಂಬ ಹೆಸರಿದ್ದ ಹೆಬ್ರೋನಿನಲ್ಲಿ ವಾಸವಾಗಿದ್ದ ಕಾನಾನ್ಯರ ಮೇಲೆ ಹೋಗಿ ಶೇಷೈ, ಅಹೀಮನ್, ತಲ್ಮೈರನ್ನು ಸೋಲಿಸಿದರು.</verse>
				<verse number="11">ಅಲ್ಲಿಂದ ದೆಬೀರಿನ ನಿವಾಸಿಗಳ ವಿರೋಧವಾಗಿ ಹೋದರು. ದೆಬೀರಿಗೆ ಮೊದಲು ಕಿರ್ಯತ್ ಸೇಫೆರ್ ಎಂಬ ಹೆಸರಿತ್ತು.</verse>
				<verse number="12">ಕಾಲೇಬನು, “ಕಿರ್ಯತ್ ಸೇಫೆರ ಮೇಲೆ ದಾಳಿಮಾಡಿ ತೆಗೆದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ,” ಎಂದು ಹೇಳಿದ್ದನು.</verse>
				<verse number="13">ಆಗ ಕಾಲೇಬನ ತಮ್ಮನಾದ ಕೆನಾಜನ ಮಗನಾದ ಒತ್ನಿಯೇಲನು ಅದನ್ನು ಹಿಡಿದನು. ಅನಂತರ ಕಾಲೇಬನು ತನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಅವನಿಗೆ ಮದುವೆ ಮಾಡಿಕೊಟ್ಟನು.</verse>
				<verse number="14">ಒಂದು ದಿನ ಅಕ್ಷಾ ಒತ್ನಿಯೇಲನೊಂದಿಗೆ ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಇನ್ನೂ ಒಂದು ಹೊಲವನ್ನು ಕೇಳುವುದಕ್ಕೆ ಅವನನ್ನು ಪ್ರೇರೇಪಿಸಿ, ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳಿಗೆ, “ನಿನಗೆ ಏನು ಬೇಕು?” ಎಂದನು.</verse>
				<verse number="15">ಅದಕ್ಕೆ ಅವಳು ಅವನಿಗೆ, “ನನಗೆ ಒಂದು ಸಹಾಯಮಾಡಬೇಕು. ಮೊದಲು ದಕ್ಷಿಣ ಹೊಲವನ್ನು ನೀನು ನನಗೆ ಕೊಟ್ಟೆ; ನೀರಿನ ಬುಗ್ಗೆಗಳನ್ನು ಸಹ ನನಗೆ ಕೊಡು,” ಎಂದಳು. ಆಗ ಕಾಲೇಬನು ಅವಳಿಗೆ ಮೇಲಿನ ಹಾಗೂ ಕೆಳಗಿನ ನೀರಿನ ಬುಗ್ಗೆಗಳನ್ನು ಕೊಟ್ಟನು.</verse>
				<verse number="16">ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು, ಯೆಹೂದ ಗೋತ್ರದವರ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೆಹೂದದ ಗೋತ್ರದವರ ಮರುಭೂಮಿಗೆ ಬಂದು, ಅಲ್ಲಿನ ಜನರ ಸಂಗಡ ವಾಸವಾಗಿದ್ದರು.</verse>
				<verse number="17">ಯೆಹೂದ ಗೋತ್ರದವರು ತನ್ನ ಸಹೋದರರಾದ ಸಿಮೆಯೋನ್ಯರ ಸಂಗಡ ಹೊರಟು, ಚೆಫೆತ್‌ನಲ್ಲಿ ವಾಸವಾಗಿರುವ ಕಾನಾನ್ಯರ ಮೇಲೆ ದಾಳಿಮಾಡಿ, ಆ ಪಟ್ಟಣವನ್ನು ನಿರ್ಮೂಲ ಮಾಡಿದರು. ಆ ಪಟ್ಟಣವು ಹೊರ್ಮಾ ಎಂದು ಕರೆಯಲಾಗಿತ್ತು.</verse>
				<verse number="18">ಇದಲ್ಲದೆ ಯೆಹೂದ ಗೋತ್ರದವರು ಗಾಜಾವನ್ನೂ ಅದರ ಮೇರೆಯನ್ನೂ; ಅಷ್ಕೆಲೋನನ್ನೂ, ಅದರ ಮೇರೆಯನ್ನೂ; ಎಕ್ರೋನನ್ನೂ, ಅದರ ಮೇರೆಯನ್ನೂ ತೆಗೆದುಕೊಂಡರು.</verse>
				<verse number="19">ಯೆಹೋವ ದೇವರು ಯೆಹೂದ ಗೋತ್ರದವರ ಸಂಗಡ ಇದ್ದುದರಿಂದ, ಅವರು ಬೆಟ್ಟದ ಪ್ರದೇಶಗಳನ್ನೆಲ್ಲಾ ಸ್ವಾಧೀನಪಡಿಸಿಕೊಂಡರು. ಆದರೆ ತಗ್ಗಿನ ನಿವಾಸಿಗಳಿಗೆ ಕಬ್ಬಿಣದ ರಥಗಳಿದ್ದುದರಿಂದ, ಅವರು ಅವರನ್ನು ಹೊರಡಿಸಲಾರದೆ ಹೋದರು.</verse>
				<verse number="20">ಮೋಶೆಯು ಹೇಳಿದ ಪ್ರಕಾರ, ಅವರು ಹೆಬ್ರೋನನ್ನು ಕಾಲೇಬನಿಗೆ ಕೊಟ್ಟರು. ಅವರು ಅನಾಕನ ಮೂವರು ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟರು.</verse>
				<verse number="21">ಬೆನ್ಯಾಮೀನ್ಯರಿಗೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಸಾಧ್ಯವಾಗಲಿಲ್ಲ. ಆದುದರಿಂದ ಯೆಬೂಸಿಯರು ಈ ದಿನದವರೆಗೂ ಬೆನ್ಯಾಮೀನರ ಸಂಗಡ ವಾಸವಾಗಿದ್ದಾರೆ.</verse>
				<verse number="22">ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಏರಿಹೋದರು. ಯೆಹೋವ ದೇವರು ಅವರ ಸಂಗಡ ಇದ್ದರು.</verse>
				<verse number="23">ಆದರೆ ಮೊದಲು ಲೂಜ್ ಎಂದು ಹೆಸರಿದ್ದ ಬೇತೇಲೆಂಬ ಪಟ್ಟಣವನ್ನು ಸಂಚರಿಸಿ ನೋಡಲು, ಯೋಸೇಫನ ಮನೆಯವರನ್ನು ಕಳುಹಿಸಲಾಯಿತು.</verse>
				<verse number="24">ಗೂಢಚಾರರು ಪಟ್ಟಣದೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ, “ದಯಮಾಡಿ ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ನಮಗೆ ತೋರಿಸು. ನಾವು ನಿನಗೆ ಕರುಣೆ ತೋರಿಸುವೆವು,” ಎಂದರು.</verse>
				<verse number="25">ಅವನು ಪಟ್ಟಣದಲ್ಲಿ ಪ್ರವೇಶಿಸುವ ಮಾರ್ಗವನ್ನು ಅವರಿಗೆ ತೋರಿಸಿದಾಗ, ಅವರು ಬಂದು ಪಟ್ಟಣವನ್ನು ಖಡ್ಗದಿಂದ ಹೊಡೆದು, ಆ ಮನುಷ್ಯನನ್ನೂ ಅವನ ಸಮಸ್ತ ಕುಟುಂಬವನ್ನೂ ಕಳುಹಿಸಿಬಿಟ್ಟರು.</verse>
				<verse number="26">ಆ ಮನುಷ್ಯನು ಹಿತ್ತಿಯರ ದೇಶಕ್ಕೆ ಹೋಗಿ, ಅಲ್ಲಿ ಒಂದು ಪಟ್ಟಣವನ್ನು ಕಟ್ಟಿ, ಅದಕ್ಕೆ ಲೂಜ್ ಎಂದು ಹೆಸರಿಟ್ಟನು. ಈವರೆಗೂ ಅದಕ್ಕೆ ಅದೇ ಹೆಸರಿದೆ.</verse>
				<verse number="27">ಮನಸ್ಸೆಯ ಗೋತ್ರದವರು ಬೇತ್ ಷೆಯಾನರನ್ನೂ, ಅವರ ಊರುಗಳವರನ್ನೂ; ತಾನಕದವರನ್ನೂ, ಅವರ ಊರುಗಳವರನ್ನೂ; ದೋರಿನವರನ್ನೂ, ಅವರ ಊರುಗಳವರನ್ನೂ; ಇಬ್ಲೆಯಾಮಿನವರನ್ನೂ, ಅವರ ಊರುಗಳವರನ್ನೂ, ಮೆಗಿದ್ದೋನಿನವರನ್ನೂ, ಅವರ ಊರುಗಳವರನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಆ ದೇಶದಲ್ಲಿ ವಾಸಿಸಬೇಕೆಂದಿದ್ದರು.</verse>
				<verse number="28">ಇಸ್ರಾಯೇಲರು ಬಲಗೊಂಡಾಗ, ಅವರನ್ನು ಪೂರ್ಣವಾಗಿ ಹೊರಡಿಸಿಬಿಡದೆ, ಅವರನ್ನು ದಾಸತ್ವಕ್ಕೆ ಕಾನಾನ್ಯರಿಗೆ ನೇಮಕ ಮಾಡಿದರು.</verse>
				<verse number="29">ಇದಲ್ಲದೆ ಎಫ್ರಾಯೀಮ್ಯರು ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಕಾನಾನ್ಯರು ಗೆಜೆರಿನಲ್ಲಿ ಅವರ ಸಂಗಡ ವಾಸಿಸಿದ್ದರು.</verse>
				<verse number="30">ಜೆಬುಲೂನ್ಯರು ಕಿಟ್ರೋನಿನ ವಾಸಿಗಳನ್ನೂ ನಹಲೋಲಿನ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ. ಕಾನಾನ್ಯರಾದ ಇವರು ಅವರಲ್ಲಿ ದಾಸರಾಗಿ ವಾಸಮಾಡುವವರಾದರು.</verse>
				<verse number="31">ಆಶೇರ್ಯರು ಅಕ್ಕೋವಿನ ವಾಸಿಗಳನ್ನೂ; ಸೀದೋನಿನ ವಾಸಿಗಳನ್ನೂ; ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಪಟ್ಟಣಗಳ ವಾಸಿಗಳನ್ನೂ ಹೊರಡಿಸಿಬಿಡಲಿಲ್ಲ.</verse>
				<verse number="32">ಆದರೆ ಆಶೇರ್ಯರು ಅವರನ್ನು ಹೊರಡಿಸಿಬಿಡದೆ, ಆ ದೇಶದ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸವಾಗಿದ್ದರು.</verse>
				<verse number="33">ನಫ್ತಾಲಿ ಗೋತ್ರದವರು ಬೇತ್ ಷೆಮೆಷ್ ವಾಸಿಗಳನ್ನೂ ಹೊರಡಿಸಿಬಿಡದೆ, ಆ ದೇಶವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು. ಆದರೆ ಬೇತ್ ಷೆಮೆಷ್, ಬೇತ್ ಅನಾತ್ ಪಟ್ಟಣ ವಾಸಿಗಳು ಅವರಿಗೆ ದಾಸರಾದರು.</verse>
				<verse number="34">ಅಮೋರಿಯರು ದಾನ್ಯರನ್ನು ತಗ್ಗಿನಲ್ಲಿ ಇಳಿಯಗೊಡದೆ, ಬೆಟ್ಟಗಳಿಗೆ ಓಡಿಸಿಬಿಟ್ಟರು</verse>
				<verse number="35">ಹೀಗೆ ಅಮೋರಿಯರು ಹರ್‌ಹೆರೆಸ್ ಬೆಟ್ಟದಲ್ಲಿಯೂ ಅಯ್ಯಾಲೋನಿನಲ್ಲಿಯೂ ಶಾಲ್ಬೀಮಿನಲ್ಲಿಯೂ ವಾಸಿಸಬೇಕೆಂದಿದ್ದರು. ಆದರೆ ಯೋಸೇಫನ ಗೋತ್ರದವರ ಕೈ ಬಲ ಹೆಚ್ಚಾದದ್ದರಿಂದ ಅವರಿಗೆ ದಾಸರಾದರು.</verse>
				<verse number="36">ಹೀಗೆ ಅಮೋರಿಯರ ಮೇರೆಯು ಅಕ್ರಬ್ಬೀಮನ್ನು ಹಿಡಿದು ಸೆಲ ಬಂಡೆಯಿಂದ ಮೇಲಕ್ಕೆ ವಿಸ್ತರಿಸಿಕೊಂಡಿದೆ.</verse>
			</chapter>
			<chapter number="2">
				<verse number="1">ಯೆಹೋವ ದೇವರ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು, “ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ, ನಿಮ್ಮ ತಂದೆಗಳಿಗೆ ಆಣೆ ಇಟ್ಟ ದೇಶದಲ್ಲಿ ನಿಮ್ಮನ್ನು ಸೇರಿಸಿದೆನು. ನಾನು ನಿಮ್ಮ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಎಂದಿಗೂ ನಿರರ್ಥಕ ಮಾಡೆನು.</verse>
				<verse number="2">‘ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡದೆ, ಅವರ ಬಲಿಪೀಠಗಳನ್ನು ಕೆಡಿವಿಬಿಡಿರಿ,’ ಎಂದು ಹೇಳಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಏಕೆ ಮಾಡಿದಿರಿ?</verse>
				<verse number="3">ಆದ್ದರಿಂದ, ‘ನಾನು ಸಹ ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವುದಿಲ್ಲ. ಅವರು ನಿಮ್ಮ ಪಕ್ಕದಲ್ಲಿ ಮುಳ್ಳುಗಳಂತಿರುವರು. ಅವರ ದೇವರುಗಳು ನಿಮಗೆ ಉರುಲಾಗುವುವು,’ ಎಂದು ನಾನು ಹೇಳಿದ್ದೆನು.”</verse>
				<verse number="4">ಯೆಹೋವ ದೇವರ ದೂತನು ಈ ಮಾತುಗಳನ್ನು ಇಸ್ರಾಯೇಲರೆಲ್ಲರಿಗೆ ಹೇಳುವಾಗ, ಜನರು ಗಟ್ಟಿಯಾಗಿ ಅತ್ತರು.</verse>
				<verse number="5">ಆ ಸ್ಥಳಕ್ಕೆ ಬೋಕೀಮ್ ಎಂಬ ಹೆಸರಿಟ್ಟು, ಅಲ್ಲಿ ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸಿದರು.</verse>
				<verse number="6">ಯೆಹೋಶುವನು ಜನರನ್ನು ಕಳುಹಿಸಿಬಿಟ್ಟಾಗ, ಇಸ್ರಾಯೇಲರು ದೇಶವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ತಮ್ಮ ತಮ್ಮ ಬಾಧ್ಯತೆಗಳಿಗೆ ಹೋದರು.</verse>
				<verse number="7">ಆದರೆ ಯೆಹೋಶುವನ ಎಲ್ಲಾ ದಿನಗಳಲ್ಲಿಯೂ ಅವನ ಕಾಲದಿಂದ ಇನ್ನೂ ಜೀವಿಸುತ್ತಾ ಯೆಹೋವ ದೇವರು ಇಸ್ರಾಯೇಲರಿಗೋಸ್ಕರ ಮಾಡಿದ ಎಲ್ಲ ಮಹತ್ಕಾರ್ಯಗಳನ್ನು ಅರಿತಿದ್ದ ಹಿರಿಯರ ದಿನಗಳಲ್ಲಿಯೂ ಇಸ್ರಾಯೇಲರು ಯೆಹೋವ ದೇವರನ್ನು ಸೇವಿಸಿದರು.</verse>
				<verse number="8">ಆದರೆ ನೂನನ ಮಗನೆಂಬ ಯೆಹೋವ ದೇವರ ಸೇವಕನಾದ ಯೆಹೋಶುವನು ನೂರಹತ್ತು ವರ್ಷ ಪ್ರಾಯದವನಾಗಿ ಮರಣಹೊಂದಿದನು.</verse>
				<verse number="9">ಅವನನ್ನು ಎಫ್ರಾಯೀಮನ ಬೆಟ್ಟದಲ್ಲಿ ಗಾಷ್ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್ ಹೆರೆಸ್‌ನಲ್ಲಿ ಹೂಳಿಟ್ಟರು.</verse>
				<verse number="10">ಅವನ ಕಾಲದವರೆಲ್ಲರೂ ಪಿತೃಗಳ ಬಳಿಗೆ ಸೇರಿದ ಮೇಲೆ, ಯೆಹೋವ ದೇವರನ್ನೂ ಅವರು ಇಸ್ರಾಯೇಲರಿಗೋಸ್ಕರ ಮಾಡಿದ ಮಹತ್ಕಾರ್ಯಗಳನ್ನೂ ಅರಿಯದಿದ್ದ ಬೇರೊಂದು ಸಂತಾನವು ಹುಟ್ಟಿತು.</verse>
				<verse number="11">ಇಸ್ರಾಯೇಲರು ಯೆಹೋವ ದೇವರ ಮುಂದೆ ಕೆಟ್ಟತನ ಮಾಡಿ, ಬಾಳನನ್ನು ಸೇವಿಸಿ,</verse>
				<verse number="12">ತಮ್ಮ ತಂದೆಗಳನ್ನು ಈಜಿಪ್ಟಿನಿಂದ ಹೊರಡಿಸಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು, ತಮ್ಮ ಸುತ್ತಲಿರುವ ಜನಾಂಗಗಳ ದೇವರುಗಳ ಹಿಂದೆ ಹೋಗಿ, ಅವುಗಳಿಗೆ ಅಡ್ಡಬಿದ್ದು, ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದರು.</verse>
				<verse number="13">ಅವರು ಯೆಹೋವ ದೇವರನ್ನು ಬಿಟ್ಟು, ಬಾಳನನ್ನೂ ಅಷ್ಟೋರೆತನ್ನೂ ಸೇವಿಸಿದರು.</verse>
				<verse number="14">ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿಗೆ ವಿರೋಧವಾಗಿ ಉರಿಗೊಂಡು, ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಇನ್ನು ಮೇಲೆ ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ, ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟರು.</verse>
				<verse number="15">ಯೆಹೋವ ದೇವರು ಹೇಳಿದ ಹಾಗೆಯೂ ಕರ್ತನು ಅವರಿಗೆ ಆಣೆಯಿಟ್ಟ ಹಾಗೆಯೂ ಅವರು ಎಲ್ಲಿ ಹೋದರೂ ಅಲ್ಲಿ ಕೇಡು ಆಗುವುದಕ್ಕೆ ಯೆಹೋವ ದೇವರ ಕೈ ಅವರಿಗೆ ವಿರೋಧವಾಗಿತ್ತು.</verse>
				<verse number="16">ಆದರೂ ಯೆಹೋವ ದೇವರು ಅವರನ್ನು ಕೊಳ್ಳೆಹೊಡೆಯುವವರ ಕೈಯಿಂದ ಬಿಡಿಸುವದಕ್ಕೋಸ್ಕರ ನ್ಯಾಯಾಧಿಪತಿಗಳನ್ನು ಎಬ್ಬಿಸಿದರು.</verse>
				<verse number="17">ಅವರು ತಮ್ಮ ನ್ಯಾಯಾಧಿಪತಿಗಳ ಮಾತನ್ನು ಕೇಳದೆ, ಅನ್ಯದೇವರುಗಳ ಹಿಂದೆ ಹೋಗಿ, ಅವುಗಳಿಗೆ ಅಡ್ಡಬಿದ್ದು, ತಮ್ಮ ಪಿತೃಗಳು ಯೆಹೋವ ದೇವರ ಆಜ್ಞೆಗಳನ್ನು ಕೇಳಿ ನಡೆದ ಮಾರ್ಗವನ್ನು ಶೀಘ್ರವಾಗಿ ತೊರೆದುಬಿಟ್ಟರು. ಅವರು ಮಾಡಿದ ಪ್ರಕಾರ ಮಾಡಲಿಲ್ಲ.</verse>
				<verse number="18">ಯೆಹೋವ ದೇವರು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿದಾಗ, ಯೆಹೋವ ದೇವರು ನ್ಯಾಯಾಧಿಪತಿಯ ಸಂಗಡ ಇದ್ದು, ಆ ನ್ಯಾಯಾಧಿಪತಿಯ ದಿವಸಗಳಲ್ಲೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ತಪ್ಪಿಸಿ ರಕ್ಷಿಸುತ್ತಿದ್ದರು. ಏಕೆಂದರೆ ಅವರು ತಮ್ಮನ್ನು ಬಾಧಿಸಿ, ಶ್ರಮೆಪಡಿಸುವವರ ನಿಮಿತ್ತ ಗೋಳಾಡಿದ್ದರಿಂದ ಯೆಹೋವ ದೇವರು ಕನಿಕರಪಟ್ಟರು.</verse>
				<verse number="19">ಆ ನ್ಯಾಯಾಧಿಪತಿಯ ಮರಣದ ನಂತರ, ಅವರು ತಿರುಗಿ ಮಾರ್ಗತಪ್ಪಿ, ಅನ್ಯದೇವರುಗಳನ್ನು ಹಿಂಬಾಲಿಸಿ ಹೋಗಿ, ಅವುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದು, ತಮ್ಮ ಹಿರಿಯರಿಗಿಂತ ಅಧಿಕ ಭ್ರಷ್ಟರಾದರು. ಅವರು ತಮ್ಮ ದುರ್ಮಾರ್ಗಗಳನ್ನೂ ಹಟಮಾರಿತನವನ್ನೂ ಬಿಡಲೇ ಇಲ್ಲ.</verse>
				<verse number="20">ಆದ್ದರಿಂದ ಯೆಹೋವ ದೇವರು ಇಸ್ರಾಯೇಲರ ಮೇಲೆ ಕೋಪದಿಂದ ಉರಿಗೊಂಡು, “ಈ ಜನಾಂಗವು ನಾನು ಅವರ ಪಿತೃಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ,</verse>
				<verse number="21">ನಾನು ಸಹ ಇನ್ನು ಮೇಲೆ ಯೆಹೋಶುವನು ಮರಣಹೊಂದುವಾಗ ಉಳಿಸಿದ ಜನಾಂಗಗಳಲ್ಲಿ ಒಬ್ಬರನ್ನಾದರೂ ಇವರ ಮುಂದೆ ಹೊರಡಿಸಿಬಿಡುವುದಿಲ್ಲ,” ಎಂದರು.</verse>
				<verse number="22">ಇಸ್ರಾಯೇಲರು ತಮ್ಮ ತಂದೆಗಳು ಕೈಗೊಂಡು ನಡೆದ ಯೆಹೋವ ದೇವರ ಮಾರ್ಗದಲ್ಲಿ ತಾವು ಕೈಗೊಂಡು ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುವ ಹಾಗೆ,</verse>
				<verse number="23">ಯೆಹೋವ ದೇವರು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ, ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದರು.</verse>
			</chapter>
			<chapter number="3">
				<verse number="1">ಕಾನಾನ್ ದೇಶದ ಸಕಲ ಯುದ್ಧಗಳನ್ನು ಅರಿಯದೆ ಇದ್ದ ಇಸ್ರಾಯೇಲರನ್ನು ಪರೀಕ್ಷಿಸುವುದಕ್ಕೂ,</verse>
				<verse number="2">ಮೊದಲು ಯುದ್ಧವನ್ನು ಅರಿಯದೆ ಇದ್ದ ಇಸ್ರಾಯೇಲಿನ ಸಂತತಿಗಳವರು ಅದನ್ನು ಕೂಡ ಕಲಿತುಕೊಳ್ಳುವುದಕ್ಕೂ ಯೆಹೋವ ದೇವರು ಉಳಿಸಿದ ಜನಾಂಗಗಳು ಯಾವುವೆಂದರೆ:</verse>
				<verse number="3">ಐದು ಮಂದಿ ಫಿಲಿಷ್ಟಿಯರ ಅಧಿಪತಿಗಳೂ ಸಮಸ್ತ ಕಾನಾನ್ಯರೂ ಸೀದೋನ್ಯರೂ ಬಾಳ್ ಹೆರ್ಮೋನ್ ಬೆಟ್ಟದಿಂದ ಪ್ರಾರಂಭಿಸಿ ಹಮಾತಿನ ಪ್ರದೇಶದವರೆಗೂ ಲೆಬನೋನಿನ ಬೆಟ್ಟದಲ್ಲಿ ವಾಸವಾಗಿರುವ ಹಿವ್ವಿಯರು ಇವರೇ.</verse>
				<verse number="4">ತಾವು ಮೋಶೆಯ ಮುಖಾಂತರವಾಗಿ ಇಸ್ರಾಯೇಲರ ಪಿತೃಗಳಿಗೆ ಆಜ್ಞಾಪಿಸಿದ ಆಜ್ಞೆಗಳನ್ನು ಇಸ್ರಾಯೇಲರು ಕೇಳುವರೋ ಇಲ್ಲವೋ ಎಂದು ಪರೀಕ್ಷಿಸುವುದಕ್ಕೆ ಯೆಹೋವ ದೇವರು ಅವರನ್ನು ಉಳಿಸಿಬಿಟ್ಟರು.</verse>
				<verse number="5">ಇಸ್ರಾಯೇಲರು ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜೀಯರ, ಹಿವ್ವಿಯರ, ಯೆಬೂಸಿಯರ ಮಧ್ಯದಲ್ಲಿ ವಾಸವಾಗಿದ್ದು,</verse>
				<verse number="6">ಅವರ ಪುತ್ರಿಯರನ್ನು ತಾವು ಹೆಂಡತಿಯರನ್ನಾಗಿ ತೆಗೆದುಕೊಂಡು, ತಮ್ಮ ಪುತ್ರಿಯರನ್ನು ಅವರ ಪುತ್ರರಿಗೆ ಮದುವೆ ಮಾಡಿಕೊಟ್ಟು, ಅವರ ದೇವರುಗಳನ್ನು ಸೇವಿಸಿದರು.</verse>
				<verse number="7">ಇಸ್ರಾಯೇಲರು ಯೆಹೋವ ದೇವರ ಮುಂದೆ ಕೆಟ್ಟದ್ದನ್ನು ಮಾಡಿ, ತಮ್ಮ ದೇವರಾದ ಯೆಹೋವ ದೇವರನ್ನು ಮರೆತು, ಬಾಳನನ್ನೂ ಅಶೇರನನ್ನೂ ಸೇವಿಸಿದರು.</verse>
				<verse number="8">ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಕೋಪಗೊಂಡು, ಅವರನ್ನು ಅರಾಮ್ ನಹರೈಮ್‌ದ ಅರಸನಾದ ಕೂಷನ್ ರಿಷಾತಯಿಮನ ಕೈಗೆ ಮಾರಿಬಿಟ್ಟರು. ಇಸ್ರಾಯೇಲರು ಕೂಷನ್‌ರಿಷಾತಯಿಮ್ ಎಂಬವನಿಗೆ ಎಂಟು ವರ್ಷ ಗುಲಾಮರಾಗಿದ್ದರು.</verse>
				<verse number="9">ತರುವಾಯ ಇಸ್ರಾಯೇಲರು ಯೆಹೋವ ದೇವರನ್ನು ಕೂಗುವಾಗ, ಯೆಹೋವ ದೇವರು ಇಸ್ರಾಯೇಲರಿಗೆ ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ, ಕಾಲೇಬನ ತಮ್ಮನಾದ ಕೆನಾಜನ ಮಗ ಒತ್ನಿಯೇಲನನ್ನು ಎಬ್ಬಿಸಿದರು.</verse>
				<verse number="10">ಅವನ ಮೇಲೆ ಯೆಹೋವ ದೇವರ ಆತ್ಮವು ಬಂದದ್ದರಿಂದ, ಅವನು ಇಸ್ರಾಯೇಲರಿಗೆ ನ್ಯಾಯತೀರಿಸಿದನು. ಯುದ್ಧಮಾಡುವುದಕ್ಕೆ ಹೊರಟಾಗ, ಯೆಹೋವ ದೇವರು ಅವನ ಕೈಗೆ ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಒಪ್ಪಿಸಿಕೊಟ್ಟರು. ಅವನು ಕೂಷನ್ ರಿಷಾತಯಿಮನ ಮೇಲೆ ಜಯಹೊಂದಿದನು.</verse>
				<verse number="11">ದೇಶವು ನಾಲ್ವತ್ತು ವರ್ಷದವರೆಗೆ ವಿಶ್ರಾಂತಿಯಿಂದಿತ್ತು. ತರುವಾಯ ಕೆನಾಜನ ಮಗ ಒತ್ನಿಯೇಲನು ಮರಣಹೊಂದಿದನು.</verse>
				<verse number="12">ಇಸ್ರಾಯೇಲರು ಯೆಹೋವ ದೇವರ ಮುಂದೆ ತಿರುಗಿ ಕೆಟ್ಟದ್ದನ್ನೇ ಮಾಡಿದರು. ಅವರು ಯೆಹೋವ ದೇವರ ಮುಂದೆ ಕೆಟ್ಟದ್ದನ್ನೇ ಮಾಡಿದ್ದರಿಂದ, ಯೆಹೋವ ದೇವರು ಮೋವಾಬ್ಯರ ಅರಸನಾದ ಎಗ್ಲೋನನನ್ನು ಇಸ್ರಾಯೇಲಿಗೆ ವಿರೋಧವಾಗಿ ಬಲಪಡಿಸಿದರು.</verse>
				<verse number="13">ಅವನು ಅಮ್ಮೋನನ ಮತ್ತು ಅಮಾಲೇಕ್ಯರನ್ನು ಕೂಡಿಸಿಕೊಂಡು ಬಂದು, ಇಸ್ರಾಯೇಲರನ್ನು ಹೊಡೆದು, ಖರ್ಜೂರ ಗಿಡಗಳಿರುವ ಪಟ್ಟಣವನ್ನು ಸ್ವಾಧೀನಮಾಡಿಕೊಂಡನು.</verse>
				<verse number="14">ಇಸ್ರಾಯೇಲರು ಮೋವಾಬ್ಯರ ಅರಸನಾದ ಎಗ್ಲೋನನನ್ನು ಹದಿನೆಂಟು ವರ್ಷ ಸೇವಿಸಿದರು.</verse>
				<verse number="15">ಆದರೆ ಇಸ್ರಾಯೇಲರು ಯೆಹೋವ ದೇವರನ್ನು ಕೂಗಿದಾಗ, ಯೆಹೋವ ದೇವರು ಅವರಿಗೆ ಬೆನ್ಯಾಮೀನನಾದ ಗೇರನ ಮಗ ಏಹೂದನನ್ನು ರಕ್ಷಿಸುವುದಕ್ಕೆ ಎಬ್ಬಿಸಿದರು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲರು ಮೋವಾಬಿನ ಅರಸನಾದ ಎಗ್ಲೋನನಿಗೆ ಕಪ್ಪವನ್ನು ಕಳುಹಿಸಿದರು.</verse>
				<verse number="16">ಏಹೂದನು ಇಬ್ಬಾಯಿಯುಳ್ಳ ಒಂದು ಮೊಳ ಉದ್ದವಾದ ಒಂದು ಕಠಾರಿಯನ್ನು ತನಗೆ ಮಾಡಿಕೊಂಡು, ಅದನ್ನು ತನ್ನ ವಸ್ತ್ರದ ಕೆಳಗೆ ತನ್ನ ಬಲಗಡೆ ತೊಡೆಯಲ್ಲಿ ಕಟ್ಟಿಕೊಂಡು,</verse>
				<verse number="17">ಕಾಣಿಕೆಯನ್ನು ಮೋವಾಬಿನ ಅರಸನಾದ ಎಗ್ಲೋನನ ಬಳಿಗೆ ತಂದನು. ಎಗ್ಲೋನನು ಬಹು ದಪ್ಪ ಮನುಷ್ಯನಾಗಿದ್ದನು.</verse>
				<verse number="18">ಏಹೂದನು ಕಾಣಿಕೆಯನ್ನು ಕೊಟ್ಟು ತೀರಿಸಿದಾಗ, ಕಾಣಿಕೆಯನ್ನು ಹೊತ್ತುಕೊಂಡು ಬಂದ ಜನರನ್ನು ಕಳುಹಿಸಿಬಿಟ್ಟು,</verse>
				<verse number="19">ತಾನು ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದಿಂದ ಹಿಂದಕ್ಕೆ ತಿರುಗಿ, ಅವನ ಬಳಿಗೆ ಬಂದು, “ಅರಸನೇ, ನಿನ್ನ ಸಂಗಡ ಹೇಳಬೇಕಾದ ರಹಸ್ಯವಾದ ಒಂದು ಮಾತು ಇದೆ,” ಎಂದನು. ಅವನು, “ನಿಶ್ಶಬ್ದ,” ಎಂದು ಹೇಳಿದಾಗ, ಅವನ ಬಳಿಯಲ್ಲಿ ನಿಂತಿದ್ದವರೆಲ್ಲರು ಅವನನ್ನು ಬಿಟ್ಟು ಹೊರಗೆ ಹೋದರು.</verse>
				<verse number="20">ಅವನು ತನಗೋಸ್ಕರ ಮಾತ್ರ ಇದ್ದ ಬೇಸಿಗೆಯ ಕೊಠಡಿಯಲ್ಲಿ ಕುಳಿತಾಗ, ಏಹೂದನು ಅವನ ಬಳಿಗೆ ಪ್ರವೇಶಿಸಿ, “ನಿನ್ನ ಸಂಗಡ ಹೇಳಬೇಕಾದ ದೇವರ ಸಂದೇಶ ನನಗಿದೆ,” ಎಂದನು. ಅವನು ತನ್ನ ಸಿಂಹಾಸನದಿಂದ ಎದ್ದನು.</verse>
				<verse number="21">ಏಹೂದನು ತನ್ನ ಎಡಗೈಯನ್ನು ಚಾಚಿ, ತನ್ನ ಬಲಗಡೆ ತೊಡೆಯಲ್ಲಿದ್ದ ಕಠಾರಿಯನ್ನು ತೆಗೆದುಕೊಂಡು, ಅವನ ಹೊಟ್ಟೆಯಲ್ಲಿ ತಿವಿದನು.</verse>
				<verse number="22">ಅದು ಅಲಗಿನ ಸಂಗಡ ಹಿಡಿ ಸಮೇತ ಅವನ ಹೊಟ್ಟೆಯಲ್ಲಿ ಹೊಕ್ಕು, ಕಿತ್ತು ತೆಗೆಯಕೂಡದ ಹಾಗೆ ಕೊಬ್ಬು ಅಲಗನ್ನು ಸುತ್ತಿಕೊಂಡಿತು. ಅದರಿಂದ ಮಲವು ಹೊರಟಿತು.</verse>
				<verse number="23">ಆಗ ಏಹೂದನು ಕೊಠಡಿಯ ಬಾಗಿಲನ್ನು ತನ್ನ ಹಿಂಭಾಗದಲ್ಲಿ ಮುಚ್ಚಿ, ಬೀಗವನ್ನು ಹಾಕಿ, ದ್ವಾರಾಂಗಳದಿಂದ ಹೊರಟುಹೋದನು.</verse>
				<verse number="24">ಅವನು ಹೋದ ತರುವಾಯ, ಕೊಠಡಿಯ ಸೇವಕರು ಬಾಗಿಲು ಮುಚ್ಚಿರುವುದನ್ನು ಕಂಡು, “ಅರಸನು ನಿಶ್ಚಯವಾಗಿ ತನ್ನ ತಂಪಾದ ಕೋಣೆಯಲ್ಲಿ ವಿಸರ್ಜನೆಗಾಗಿ ಹೋಗಿರಬೇಕು,” ಎಂದುಕೊಂಡರು.</verse>
				<verse number="25">ಅವರು ತಮಗೆ ಬೇಸರವಾಗುವ ಮಟ್ಟಿಗೂ ಕಾದಿದ್ದರು. ಆದರೆ, ಅವನು ಕೊಠಡಿ ಬಾಗಿಲನ್ನು ತೆರೆಯದೆ ಇದ್ದುದರಿಂದ, ಅವರು ಬೀಗದ ಕೈಯನ್ನು ತೆಗೆದುಕೊಂಡು ಬಾಗಿಲನ್ನು ತೆರೆದರು. ಅವರ ಪ್ರಭುವು ನೆಲದ ಮೇಲೆ ಮರಣಹೊಂದಿದ್ದನು.</verse>
				<verse number="26">ಅವರು ಆಲಸ್ಯ ಮಾಡುತ್ತಿರುವಾಗ, ಏಹೂದನು ತಪ್ಪಿಸಿಕೊಂಡು ವಿಗ್ರಹಗಳನ್ನು ದಾಟಿ, ಸೇಯೀರಾತನ್ನು ಸೇರಿ ತಪ್ಪಿಸಿಕೊಂಡನು.</verse>
				<verse number="27">ಅವನು ಅಲ್ಲಿ ಬಂದಾಗ, ಎಫ್ರಾಯೀಮನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲರು ಅವನ ಸಂಗಡ ಬೆಟ್ಟದಿಂದ ಇಳಿದರು. ಅವನು ಇವರ ಮುಂದೆ ನಡೆದರು.</verse>
				<verse number="28">ಅವರಿಗೆ, “ನೀವು ನನ್ನ ಹಿಂದೆ ಬನ್ನಿರಿ. ಏಕೆಂದರೆ ಯೆಹೋವ ದೇವರು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟರು,” ಎಂದನು. ಅವರು ಅವನ ಹಿಂದೆ ಬಂದು, ಮೋವಾಬ್ಯರಿಗೆ ಎದುರಾದ ಯೊರ್ದನ್ ನದಿ ರೇವುಗಳನ್ನು ಹಿಡಿದು, ಒಬ್ಬರನ್ನಾದರೂ ದಾಟಗೊಡದೆ,</verse>
				<verse number="29">ಮೋವಾಬ್ಯರಲ್ಲಿ ಹೆಚ್ಚು ಕಡಿಮೆ ಹತ್ತು ಸಾವಿರ ಜನರನ್ನು ಹತಮಾಡಿದರು. ಅವರೆಲ್ಲರು ಪುಷ್ಟರೂ, ಪರಾಕ್ರಮಿಗಳೂ ಆಗಿದ್ದರು. ಅವರಲ್ಲಿ ಒಬ್ಬನಾದರೂ ತಪ್ಪಿಸಿಕೊಳ್ಳಲಾಗಲಿಲ್ಲ.</verse>
				<verse number="30">ಹೀಗೆ ಆ ದಿವಸದಲ್ಲಿ ಮೋವಾಬ್ ಇಸ್ರಾಯೇಲರ ಆಳಿಕೆಗೆ ಅಧೀನವಾಗಿತ್ತು. ದೇಶವು ಎಂಬತ್ತು ವರ್ಷ ವಿಶ್ರಾಂತಿಗೊಂಡಿತು.</verse>
				<verse number="31">ಏಹೂದನ ತರುವಾಯ ಅನಾತನ ಮಗ ಶಮ್ಗರನು ಎದ್ದನು. ಅವನು ಫಿಲಿಷ್ಟಿಯರಲ್ಲಿ ಆರುನೂರು ಜನರನ್ನು ಎತ್ತಿನ ಮುಳ್ಳುಗೋಲಿನಿಂದ ಹತಮಾಡಿದನು. ಅವನು ಸಹ ಇಸ್ರಾಯೇಲರನ್ನು ರಕ್ಷಿಸಿದನು.</verse>
			</chapter>
			<chapter number="4">
				<verse number="1">ಏಹೂದನು ಮರಣಹೊಂದಿದನಂತರ ಇಸ್ರಾಯೇಲರು ತಿರುಗಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು.</verse>
				<verse number="2">ಆದ್ದರಿಂದ ಯೆಹೋವ ದೇವರು ಅವರನ್ನು ಹಾಚೋರಿನಲ್ಲಿ ಆಳುವ ಕಾನಾನಿನ ಅರಸನಾದ ಯಾಬೀನನ ಕೈಗೆ ಮಾರಿಬಿಟ್ಟರು. ಅವನ ಸೈನ್ಯಕ್ಕೆ ಜನಾಂಗಗಳ ಪಟ್ಟಣವಾದ ಹರೋಷೆತ್ ಹಗ್ಗೊಯಿಮ್‌ನಲ್ಲಿ ವಾಸವಾಗಿರುವ ಸೀಸೆರನು ಅಧಿಪತಿಯಾಗಿದ್ದನು.</verse>
				<verse number="3">ಆಗ ಇಸ್ರಾಯೇಲರು ಯೆಹೋವ ದೇವರಿಗೆ ಮೊರೆಯಿಟ್ಟರು. ಅವನಿಗೆ ಒಂಬೈನೂರು ಕಬ್ಬಿಣದ ರಥಗಳಿದ್ದವು. ಅವನು ಇಸ್ರಾಯೇಲರನ್ನು ಇಪ್ಪತ್ತು ವರುಷ ಬಲವಾಗಿ ಬಾಧೆಪಡಿಸಿದನು.</verse>
				<verse number="4">ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿ ಇಸ್ರಾಯೇಲರಿಗೆ ನ್ಯಾಯ ತೀರಿಸುತ್ತಿದ್ದಳು.</verse>
				<verse number="5">ದೆಬೋರಳು ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿ ಎಫ್ರಾಯೀಮ್ ಬೆಟ್ಟದಲ್ಲಿ ಖರ್ಜೂರದ ಮರದ ಕೆಳಗೆ ವಾಸಿಸುತ್ತಿದ್ದಳು. ಇಸ್ರಾಯೇಲರು ಅವಳ ಬಳಿಗೆ ನ್ಯಾಯಕ್ಕಾಗಿ ಬರುತ್ತಿದ್ದರು.</verse>
				<verse number="6">ಅವಳು ಕೆದೆಷ್ ನಫ್ತಾಲಿಯಲ್ಲಿರುವ ಅಬೀನೋವಮನ ಮಗ ಬಾರಾಕನನ್ನು ಕರೆಯಿಸಿ ಅವನಿಗೆ, “ಇಸ್ರಾಯೇಲ್ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ್ದೇನೆಂದರೆ, ‘ನೀನು ನಫ್ತಾಲಿಯರಲ್ಲಿಯು, ಜೆಬುಲೂನರಲ್ಲಿಯು ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.</verse>
				<verse number="7">ನಾನು ಯಾಬೀನನ ಸೇನಾಧಿಪತಿಯಾದ ಸೀಸೆರನನ್ನೂ, ಅವನ ರಥಗಳನ್ನೂ, ಅವನ ಸೈನ್ಯವನ್ನೂ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು, ನಿನ್ನ ಕೈಗೆ ಒಪ್ಪಿಸುವೆನು,’ ಎಂದು ಆಜ್ಞಾಪಿಸಿದನು,” ಎಂದಳು.</verse>
				<verse number="8">ಬಾರಾಕನು ಅವಳಿಗೆ, “ನೀನು ನನ್ನ ಸಂಗಡ ಬಂದರೆ ನಾನು ಹೋಗುವೆನು. ನೀನು ನನ್ನ ಸಂಗಡ ಬಾರದೆ ಇದ್ದರೆ ನಾನು ಹೋಗುವುದಿಲ್ಲ,” ಎಂದನು.</verse>
				<verse number="9">ಅದಕ್ಕವಳು, “ನಾನು ನಿನ್ನ ಸಂಗಡ ಖಂಡಿತವಾಗಿ ಬರುವೆನು. ಆದರೆ ನೀನು ಹೋಗುವ ಪ್ರಯಾಣದಿಂದ ಉಂಟಾಗುವ ಘನತೆ ನಿನ್ನದಾಗಿರುವುದಿಲ್ಲ. ಏಕೆಂದರೆ ಯೆಹೋವ ದೇವರು ಸೀಸೆರನನ್ನು ಒಬ್ಬ ಸ್ತ್ರೀಯ ಕೈಗೆ ಒಪ್ಪಿಸಿಬಿಡುವೆನು,” ಎಂದು ಹೇಳಿದಳು. ದೆಬೋರಳು ಎದ್ದು ಬಾರಾಕನ ಸಂಗಡ ಕೆದೆಷಿಗೆ ಹೋದಳು.</verse>
				<verse number="10">ಬಾರಾಕನು ಜೆಬುಲೂನನ್ನೂ, ನಫ್ತಾಲಿಯನ್ನೂ ಕೆದೆಷಿಗೆ ಕರೆದನು. ಅವನು ಹತ್ತು ಸಾವಿರ ಜನರಸಹಿತವಾಗಿ ಹೋದನು. ದೆಬೋರಳು ಅವನ ಸಂಗಡ ಹೋದಳು.</verse>
				<verse number="11">ಮೋಶೆಯ ಅಳಿಯನಾದ ಹೊಬಾಬನ ಮಕ್ಕಳಲ್ಲಿ ಸೇರಿದ ಕೇನ್ಯನಾದ ಹೆಬೆರನು ಕೇನ್ಯರನ್ನು ಬಿಟ್ಟು, ತನ್ನನ್ನು ಪ್ರತ್ಯೇಕಿಸಿ, ಕೆದೆಷಿನ ಬಳಿಯಲ್ಲಿರುವ ಚಾನನ್ನೀಮ್ ಎಂಬ ಊರಲ್ಲಿ ಅಲ್ಲೋನ್ ಮರದ ಬಳಿ ತನ್ನ ಗುಡಾರವನ್ನು ಹಾಕಿಕೊಂಡಿದ್ದನು.</verse>
				<verse number="12">ಆಗ ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟದಲ್ಲಿ ಏರಿದನೆಂದು ಸೀಸೆರನಿಗೆ ತಿಳಿಸಲಾಯಿತು.</verse>
				<verse number="13">ಆದ್ದರಿಂದ ಸೀಸೆರನು ಒಂಬೈನೂರು ಕಬ್ಬಿಣದ ರಥಗಳನ್ನೂ, ತನ್ನ ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಹರೋಷೆತ್ ಹಗ್ಗೋಯಿಮಿನಿಂದ ಕೀಷೋನ್ ಹಳ್ಳಕ್ಕೆ ಬಂದನು.</verse>
				<verse number="14">ಆಗ ದೆಬೋರಳು ಬಾರಾಕನಿಗೆ, “ನೀನು ಏಳು. ಏಕೆಂದರೆ ಯೆಹೋವ ದೇವರು ಸೀಸೆರನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವ ದಿನವು ಇದೇ. ಯೆಹೋವ ದೇವರು ನಿನ್ನ ಮುಂದೆ ಹೊರಡಲಿಲ್ಲವೋ?” ಎಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು, ತಾಬೋರ್ ಬೆಟ್ಟದಿಂದ ಇಳಿದನು.</verse>
				<verse number="15">ಯೆಹೋವ ದೇವರು ಸೀಸೆರನನ್ನೂ, ಅವನ ಎಲ್ಲಾ ರಥಗಳನ್ನೂ, ಅವನ ಎಲ್ಲಾ ಸೈನ್ಯವನ್ನೂ ಬಾರಾಕನ ಮುಂದೆ ಖಡ್ಗದಿಂದ ಚದರಿಸಿದರು. ಸೀಸೆರನು ರಥದಿಂದ ಇಳಿದು ಓಡಿಹೋದನು.</verse>
				<verse number="16">ಬಾರಾಕನು ಅವನ ಸೈನ್ಯ, ರಥಗಳನ್ನು ಹರೋಷೆತ್ ಹಗ್ಗೋಯಿಮಿನವರೆಗೂ ಹಿಂದಟ್ಟಿದನು. ಸೀಸೆರನ ಸೈನ್ಯದವರೆಲ್ಲರು ಖಡ್ಗದಿಂದ ಹತರಾದರು, ಒಬ್ಬನೂ ಉಳಿಯಲಿಲ್ಲ.</verse>
				<verse number="17">ಆದರೆ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರಕ್ಕೆ ಓಡಿಬಂದನು. ಏಕೆಂದರೆ ಯಾಬೀನನೆಂಬ ಹಾಚೋರಿನ ಅರಸನಿಗೂ, ಕೇನ್ಯನಾದ ಹೆಬೆರನ ಮನೆಗೂ ನಡುವೆ ಶಾಂತಿ ಇತ್ತು.</verse>
				<verse number="18">ಆಗ ಯಾಯೇಲಳು ಸೀಸೆರನನ್ನು ಎದುರುಗೊಳ್ಳುವುದಕ್ಕೆ ಹೋಗಿ ಅವನಿಗೆ, “ಒಳಗೆ ಬಾ, ನನ್ನ ಪ್ರಭುವೇ, ನಮ್ಮ ಬಳಿಗೆ ಬಾ, ಭಯಪಡಬೇಡ,” ಎಂದು ಹೇಳಿದಳು. ಅವನನ್ನು ಒಂದು ಕಂಬಳಿಯಿಂದ ಮುಚ್ಚಿದಳು.</verse>
				<verse number="19">ಸೀಸೆರನು ಅವಳಿಗೆ, “ದಯಮಾಡಿ, ನನಗೆ ಕುಡಿಯುವುದಕ್ಕೆ ಸ್ವಲ್ಪ ನೀರು ಕೊಡು, ನನಗೆ ದಾಹವಾಗಿದೆ,” ಎಂದನು. ಅವಳು ಹಾಲಿನ ಬುದ್ದಲಿಯನ್ನು ತೆರೆದು, ಅವನಿಗೆ ಕುಡಿಯುವುದಕ್ಕೆ ಕೊಟ್ಟು, ಅವನನ್ನು ಮುಚ್ಚಿದಳು.</verse>
				<verse number="20">ತಿರುಗಿ ಅವನು ಅವಳಿಗೆ, “ನೀನು ಬಾಗಿಲಲ್ಲಿ ನಿಂತಿರು. ಯಾವನಾದರೂ ಬಂದು, ‘ಇಲ್ಲಿ ಯಾರಾದರೂ ಇದ್ದಾರೋ?’ ಎಂದು ನಿನ್ನನ್ನು ಕೇಳಿದರೆ, ‘ಇಲ್ಲ’ ಎಂದು ಹೇಳು,” ಎಂದನು.</verse>
				<verse number="21">ಹೆಬೆರನ ಹೆಂಡತಿಯಾದ ಯಾಯೇಲಳು ಗುಡಾರದ ಮೊಳೆಯನ್ನು ತೆಗೆದು, ತನ್ನ ಕೈಯಲ್ಲಿ ಸುತ್ತಿಗೆಯನ್ನು ಹಿಡಿದುಕೊಂಡು, ಅವನು ಆಯಾಸದಿಂದ ನಿದ್ರೆ ಮಾಡುತ್ತಿರುವಾಗ, ಮೆಲ್ಲನೆ ಅವನ ಬಳಿಗೆ ಬಂದು, ಅವನ ತಲೆಯಲ್ಲಿ ಆ ಮೊಳೆಯನ್ನು ಹೊಡೆದು ನೆಲದಲ್ಲಿ ನಾಟಿಸಿದಳು. ಅವನು ಮರಣಹೊಂದಿದನು.</verse>
				<verse number="22">ಸೀಸೆರನನ್ನು ಹಿಂದಟ್ಟುವ ಬಾರಾಕನು ಬಂದನು. ಆಗ ಯಾಯೇಲಳು ಅವನನ್ನು ಎದುರುಗೊಳ್ಳುವುದಕ್ಕೆ ಹೊರಟುಹೋಗಿ ಅವನಿಗೆ, “ಬಾ, ನೀನು ಹುಡುಕುವ ಮನುಷ್ಯನನ್ನು ನಾನು ನಿನಗೆ ತೋರಿಸುವೆನು,” ಎಂದು ಹೇಳಿದಳು. ಬಾರಾಕನು ಅವಳ ಬಳಿಗೆ ಬಂದಾಗ, ಸೀಸೆರನು ಮರಣಹೊಂದಿದ್ದನು. ಮೊಳೆಯು ಅವನ ತಲೆಯಲ್ಲಿ ಹೊಡೆದಿತ್ತು.</verse>
				<verse number="23">ಹೀಗೆಯೇ ದೇವರು ಆ ದಿವಸದಲ್ಲಿ ಕಾನಾನ್ಯರ ಅರಸನಾದ ಯಾಬೀನನನ್ನು ಇಸ್ರಾಯೇಲರ ಮುಂದೆ ತಗ್ಗಿಸಿದರು.</verse>
				<verse number="24">ಇಸ್ರಾಯೇಲರ ಕೈ ಕಾನಾನ್ಯರ ಅರಸನಾದ ಯಾಬೀನನನ್ನು ಕೊಂದುಬಿಡುವ ಮಟ್ಟಿಗೂ ಹೆಚ್ಚಿ ಜಯಹೊಂದಿತು.</verse>
			</chapter>
			<chapter number="5">
				<verse number="1">ಆ ದಿವಸದಲ್ಲಿ ದೆಬೋರಳೂ, ಅಬೀನೋವಮನ ಮಗ ಬಾರಾಕನೂ ಹಾಡಿದ್ದೇನೆಂದರೆ:</verse>
				<verse number="2">“ಇಸ್ರಾಯೇಲಿನ ನಾಯಕರು ಮುನ್ನಡೆದಾಗ, ಜನರು ಸ್ವಇಚ್ಛೆಯಿಂದ ಅವರನ್ನು ಹಿಂಬಾಲಿಸಿದಾಗ ಯೆಹೋವ ದೇವರನ್ನು ಸ್ತುತಿಸಿರಿ!</verse>
				<verse number="3">“ಅರಸರೇ ಕೇಳಿರಿ, ಪ್ರಭುಗಳೇ ಕೇಳಿರಿ, ಕಿವಿಗೊಡಿರಿ; ನಾನು, ನಾನೇ ಯೆಹೋವ ದೇವರಿಗೆ ಹಾಡುವೆನು. ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತುತಿಗೀತೆ ಹಾಡುವೆನು.</verse>
				<verse number="4">“ಯೆಹೋವ ದೇವರೇ, ನೀವು ಸೇಯೀರಿನಿಂದ ಹೊರಟು, ಎದೋಮಿನ ಹೊಲದಿಂದ ಮುನ್ನಡೆಯುವಾಗ, ಭೂಮಿ ನಡುಗಿತು. ಆಕಾಶವು ಸಹ ಸುರಿಸಿತು. ಮೇಘಗಳು ಸಹ ನೀರು ಸುರಿಸಿದವು.</verse>
				<verse number="5">ಯೆಹೋವ ದೇವರ ಮುಂದೆ ಬೆಟ್ಟಗಳು ಕಂಪಿಸಿದವು. ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮುಂದೆ ಸೀನಾಯಿ ಪರ್ವತವು ಸಹ ಕಂಪಿಸಿತು.</verse>
				<verse number="6">“ಅನಾತನ ಮಗ ಶಮ್ಗರನ ಕಾಲದಲ್ಲಿಯೂ, ಯಾಯೇಲಳ ದಿವಸಗಳಲ್ಲಿಯೂ ಹೆದ್ದಾರಿಯ ಸಂಚಾರ ನಿಂತುಹೋಯಿತು. ಪ್ರಯಾಣಿಕರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು.</verse>
				<verse number="7">ದೆಬೋರಳಾದ ನಾನು ಏಳುವವರೆಗೂ, ಇಸ್ರಾಯೇಲಿನಲ್ಲಿ ತಾಯಿಯಾಗಿ ನಾನು ಏಳುವವರೆಗೂ ಇಸ್ರಾಯೇಲಿನ ಹಳ್ಳಿಗಳ ನಿವಾಸಿಗಳು ಯುದ್ಧಮಾಡಲಿಲ್ಲ.</verse>
				<verse number="8">ಅವರು ಹೊಸ ದೇವರುಗಳನ್ನು ಆಯ್ದುಕೊಂಡರು. ಆಗ ಯುದ್ಧವು ಬಾಗಿಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಲವತ್ತು ಸಾವಿರ ಸೈನಿಕರಲ್ಲಿ ಗುರಾಣಿಯೂ, ಕಠಾರಿಯೂ ಇರಲಿಲ್ಲ.</verse>
				<verse number="9">ನಾನು ಇಸ್ರಾಯೇಲ್ ನಾಯಕರೊಂದಿಗೂ ಸ್ವೇಚ್ಛೆಯಿಂದ ಬಂದ ಜನರೊಂದಿಗೆ ನನ್ನ ಹೃದಯವಿದೆ. ಯೆಹೋವ ದೇವರನ್ನು ಸ್ತುತಿಸಿರಿ.</verse>
				<verse number="10">“ಬಿಳಿ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ರತ್ನಗಂಬಳಿಗಳ ಮೇಲೆ ಕುಳಿತಿರುವವರೇ, ಮಾರ್ಗದಲ್ಲಿ ನಡೆಯುವವರೇ, ಗಾನಮಾಡಿರಿ.</verse>
				<verse number="11">ನೀರು ಸೇದುವ ಸ್ಥಳಗಳ ಹತ್ತಿರ ಗಾಯಕರ ಶಬ್ದದಿಂದ ಯೆಹೋವ ದೇವರ ನೀತಿಸಾಧನೆಗಳನ್ನು ವರ್ಣಿಸುತ್ತಾರೆ. ಇಸ್ರಾಯೇಲಿನಲ್ಲಿ ಅವರ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ಮಹತ್ಕಾರ್ಯಗಳನ್ನು ತಿರುಗಿ ಪ್ರಕಟಿಸುವರು. “ಆಗ ಯೆಹೋವ ದೇವರ ಜನರು ಪಟ್ಟಣದ ಬಾಗಿಲುಗಳಿಗೆ ಇಳಿದು ಬರುವರು.</verse>
				<verse number="12">‘ಎಚ್ಚರವಾಗು, ಎಚ್ಚರವಾಗು, ದೆಬೋರಳೇ, ಎಚ್ಚರವಾಗು, ಎಚ್ಚರವಾಗಿ ಹಾಡನ್ನು ಹಾಡು; ಬಾರಾಕನೇ, ಏಳು; ಅಬೀನೋವಮನ ಮಗನೇ, ನಿನ್ನನ್ನು ಸೆರೆಹಿಡಿದವರನ್ನು ಸೆರೆಯಾಗಿ ನಡೆಸು.’</verse>
				<verse number="13">“ಆಗ ಉಳಿದವನನ್ನು ಅವರು ಜನರಲ್ಲಿ ಶ್ರೇಷ್ಠರಾದವರ ಮೇಲೆ ಆಳುವಂತೆ ಮಾಡಿದರು. ಯೆಹೋವ ದೇವರ ಜನರು ನನ್ನ ಸಹಾಯಕ್ಕಾಗಿ ಬಂದು, ಪರಾಕ್ರಮಶಾಲಿಗಳ ವಿರುದ್ಧ ಯುದ್ಧಮಾಡಿದರು.</verse>
				<verse number="14">ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯೀಮಿನಿಂದ ಉಂಟಾಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾಮೀನನು ಮಾಕೀರನಲ್ಲಿಂದ ಅಧಿಪತಿಗಳೂ, ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವವರೂ ಬಂದರು.</verse>
				<verse number="15">ಇಸ್ಸಾಕಾರನ ಪ್ರಧಾನರು ದೆಬೋರಳ ಸಂಗಡ ಇದ್ದರು. ಹೌದು, ಇಸ್ಸಾಕಾರನ ಗೋತ್ರದವರು ಬಾರಾಕನ ಹಿಂದೆ ಅವನ ಕಟ್ಟಳೆಯ ಪ್ರಕಾರ, ಕಾಲುನಡಿಗೆಯಾಗಿ ಕಣಿವೆಯಲ್ಲಿ ನಡೆದರು. ರೂಬೇನನ ಕಡೆಯವರು ತಮ್ಮ ಹೃದಯಗಳನ್ನು ಮಹಾ ಪರಿಶೋಧನೆ ಮಾಡಿಕೊಂಡರು.</verse>
				<verse number="16">ಮಂದೆಗಳ ಕೂಗನ್ನು ಕೇಳಿ, ನೀನು ಕುರಿ ಹಟ್ಟಿಗಳ ಬಳಿಯಲ್ಲಿ ಇದ್ದದ್ದೇನು? ರೂಬೇನ್ಯರ ನಡುವೆ ಹೃದಯದ ಮಹಾ ಪರಿಶೋಧನೆಗಳು ಇದ್ದವು.</verse>
				<verse number="17">ಗಿಲ್ಯಾದನು ಯೊರ್ದನ್ ನದಿಯ ಆಚೆ ವಾಸಿಸಿದನು. ದಾನನು ಹಡಗುಗಳಲ್ಲಿ ನಿಂತದ್ದೇನು? ಆಶೇರನು ಸಮುದ್ರದ ದಡದಲ್ಲಿದ್ದು, ತನ್ನ ರೇವುಗಳ ಬಳಿಯಲ್ಲಿ ವಾಸಿಸಿದನು.</verse>
				<verse number="18">ಜೆಬುಲೂನ್ಯರು ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಕೊಡುವ ಜನರಾಗಿದ್ದರು. ನಫ್ತಾಲಿಯೂ ಸಹ ಹೊಲದ ಎತ್ತರವಾದ ಸ್ಥಳಗಳಲ್ಲಿ ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಕೊಡುವ ಜನರಾಗಿದ್ದರು.</verse>
				<verse number="19">“ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸಮೀಪವಾದ ತಾನಕದಲ್ಲಿ ಯುದ್ಧಮಾಡಿದರು. ಅವರು ಬೆಳ್ಳಿ ದ್ರವ್ಯಗಳನ್ನು ತೆಗೆದುಕೊಳ್ಳಲಿಲ್ಲ.</verse>
				<verse number="20">ಆಕಾಶದಲ್ಲಿ ಇರುವವುಗಳು ಯುದ್ಧ ಮಾಡಿದವು. ನಕ್ಷತ್ರಗಳು ತಮ್ಮ ಓಟಗಳಲ್ಲಿ ಸೀಸೆರನಿಗೆ ವಿರೋಧವಾಗಿ ಯುದ್ಧ ಮಾಡಿದವು.</verse>
				<verse number="21">ಕೀಷೋನ್ ನದಿಯು, ಆ ಹಳೆಯದಾದ ಕೀಷೋನ್ ನದಿಯು ಅವರನ್ನು ಬಡಿದುಕೊಂಡು ಹೋಯಿತು. ನನ್ನ ಪ್ರಾಣವೇ, ನೀನು ಬಲವನ್ನು ತುಳಿದು ಹಾಕಿದೆ.</verse>
				<verse number="22">ಆಗ ನೆಲವನ್ನು ಘಟ್ಟಿಸಿ ಓಡುವ ಅವನ ಬಲವಾದ ಕುದುರೆಗಳ ಮೆಟ್ಟಿನಿಂದ ಗೊರಸುಗಳು ಸೀಳಿಹೋದವು.</verse>
				<verse number="23">ಯೆಹೋವ ದೇವರ ದೂತನು ಹೀಗೆ ಹೇಳುತ್ತಾನೆ, ‘ನೀವು ಮೆರೋಜನ್ನು ಶಪಿಸಿರಿ. ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ, ಏಕೆಂದರೆ ಅವರು ಯೆಹೋವ ದೇವರ ಸಹಾಯಕ್ಕೂ, ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಯೆಹೋವ ದೇವರ ಸಹಾಯಕ್ಕೂ ಬಾರದೆ ಹೋದರು.’</verse>
				<verse number="24">“ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳು ಆಶೀರ್ವಾದ ಹೊಂದಿದವಳು. ಗುಡಾರದಲ್ಲಿ ವಾಸಿಸುವ ಹೌದು, ಅವಳೇ ಸ್ತ್ರೀಯರೊಳಗೆ ಅಧಿಕ ಆಶೀರ್ವಾದ ಹೊಂದಿದವಳು.</verse>
				<verse number="25">ಅವನು ನೀರನ್ನು ಕೇಳಿದನು. ಅವಳು ಹಾಲು ಕೊಟ್ಟಳು; ಅಮೂಲ್ಯವಾದ ಬಟ್ಟಲಿನಲ್ಲಿ ಬೆಣ್ಣೆಯನ್ನು ತಂದಿಟ್ಟಳು.</verse>
				<verse number="26">ತನ್ನ ಕೈಯಲ್ಲಿ ಮೊಳೆಯನ್ನೂ, ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆಯನ್ನೂ ತೆಗೆದುಕೊಂಡಳು. ಸುತ್ತಿಗೆಯಿಂದ ಸೀಸೆರನನ್ನು ಅವಳು ಹೊಡೆದಳು. ಅವಳು ಅವನ ತಲೆಯನ್ನು ತಿವಿದು ಹೊಡೆದಳು. ಅವನ ತಲೆಯನ್ನು ಹೊಡೆದು ಬಿಟ್ಟಳು.</verse>
				<verse number="27">ಅವಳ ಕಾಲುಗಳ ಹತ್ತಿರ ಮುದುರಿ ಬಿದ್ದು ಮಲಗಿದನು. ಅವಳ ಕಾಲುಗಳ ಹತ್ತಿರ ಬಾಗಿ ಬಿದ್ದನು. ಎಲ್ಲಿ ಬಾಗಿ ಬಿದ್ದನೋ, ಅಲ್ಲಿಯೇ ಬಿದ್ದು ಮರಣಹೊಂದಿದನು.</verse>
				<verse number="28">“ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿಯಿಂದ ಕೂಗಿದಳು, ‘ಅವನ ರಥವು ಬರುವುದಕ್ಕೆ ಇಷ್ಟು ತಡವಾದದ್ದೇನು? ಅವನ ರಥಗಳ ಗಾಲಿಗಳು ಹಿಂದುಳಿದಿರುವುದೇನು?’</verse>
				<verse number="29">ಅದಕ್ಕೆ ಅವಳ ಜ್ಞಾನವುಳ್ಳ ಪ್ರಧಾನ ಸ್ತ್ರೀಯರು ಉತ್ತರಕೊಟ್ಟರು. ಅವಳೇ ತನಗೆ ಬದಲು ಮಾತು ಕೇಳಿಕೊಂಡಳು:</verse>
				<verse number="30">‘ಅವರು ಓಡಲಿಲ್ಲವೋ? ಕೊಳ್ಳೆ ಹಂಚಿಕೊಳ್ಳಲಿಲ್ಲವೋ? ಒಬ್ಬೊಬ್ಬ ಸೈನಿಕನಿಗೆ ಒಂದೆರಡು ದಾಸಿಯರು ಸೀಸೆರನಿಗಾದರೋ ನಾನಾ ವರ್ಣವುಳ್ಳ ಬಟ್ಟೆಗಳು. ನಾನಾ ವರ್ಣವುಳ್ಳ ವಿಚಿತ್ರವಾಗಿ ಕಸೂತಿಹಾಕಿದ ಬಟ್ಟೆಗಳು, ವಿಚಿತ್ರವಾಗಿ ಕಸೂತಿಹಾಕಿದ ಒಂದೆರಡು ಬಟ್ಟೆಗಳೂ ಕೊಳ್ಳೆ ಹಿಡಿಯುವವರಿಗೆ ತಕ್ಕಂಥ ಕಂಠಮಾಲೆಗಳೂ ಸಿಕ್ಕಲಿಲ್ಲವೋ?’</verse>
				<verse number="31">“ಯೆಹೋವ ದೇವರೇ, ಹೀಗೆಯೇ ನಿಮ್ಮ ಶತ್ರುಗಳೆಲ್ಲರೂ ನಾಶವಾಗಲಿ. ಆದರೆ ಅವರನ್ನು ಪ್ರೀತಿ ಮಾಡುವವರು ಪರಾಕ್ರಮದಿಂದ ಹೊರಡುವ ಸೂರ್ಯನ ಹಾಗೆಯೇ ಇರಲಿ.” ಅನಂತರ ದೇಶವು ನಲವತ್ತು ವರ್ಷ ವಿಶ್ರಾಂತಿಯಲ್ಲಿತ್ತು.</verse>
			</chapter>
			<chapter number="6">
				<verse number="1">ಇಸ್ರಾಯೇಲರು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು. ಆದ್ದರಿಂದ ಯೆಹೋವ ದೇವರು ಅವರನ್ನು ಏಳು ವರ್ಷ ಮಿದ್ಯಾನ್ಯರ ಕೈಗೆ ಒಪ್ಪಿಸಿಕೊಟ್ಟರು.</verse>
				<verse number="2">ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದ್ದರಿಂದ ಇಸ್ರಾಯೇಲರು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಬಂಡೆಯ ಬಿರುಕುಗಳನ್ನೂ, ಗವಿಗಳನ್ನೂ, ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.</verse>
				<verse number="3">ಇಸ್ರಾಯೇಲರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು,</verse>
				<verse number="4">ಗಾಜದ ಪ್ರದೇಶದ ಮಟ್ಟಿಗೂ ಭೂಮಿಯ ಫಲವನ್ನು ಕೆಡಿಸಿಬಿಟ್ಟು, ಇಸ್ರಾಯೇಲಿನಲ್ಲಿ ಆಹಾರವಾದರೂ ಕುರಿ, ದನ, ಕತ್ತೆಗಳಾದರೂ ಉಳಿಯಗೊಡಿಸಲಿಲ್ಲ.</verse>
				<verse number="5">ಅವರು ತಮ್ಮ ಪಶುಗಳ ಡೇರೆಗಳ ಸಹಿತವಾಗಿ ಮಿಡತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ, ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಅವರು ನಾಡನ್ನು ನಾಶಮಾಡುವುದಕ್ಕೆ ಬಂದರು.</verse>
				<verse number="6">ಆದಕಾರಣ ಇಸ್ರಾಯೇಲರು ಮಿದ್ಯಾನ್ಯರಿಂದ ಬಹಳ ಬಡವರಾದರು. ಆಗ ಇಸ್ರಾಯೇಲರು ಯೆಹೋವ ದೇವರಿಗೆ ಬೇಡಿಕೊಂಡರು.</verse>
				<verse number="7">ಇಸ್ರಾಯೇಲರು ಮಿದ್ಯಾನ್ಯರ ನಿಮಿತ್ತ ಯೆಹೋವ ದೇವರನ್ನು ಬೇಡಿಕೊಂಡಾಗ,</verse>
				<verse number="8">ಅವರು ಒಬ್ಬ ಪ್ರವಾದಿಯನ್ನು ಇಸ್ರಾಯೇಲರ ಬಳಿಗೆ ಕಳುಹಿಸಿದರು. ಅವನು ಅವರಿಗೆ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, “ನೀವು ದಾಸತ್ವದಲ್ಲಿದ್ದ ನಿಮ್ಮನ್ನು ನಾನು ಈಜಿಪ್ಟಿನಿಂದ ಬರಮಾಡಿದೆನು.</verse>
				<verse number="9">ನಿಮ್ಮನ್ನು ಈಜಿಪ್ಟಿನವರ ಕೈಯಿಂದ ತಪ್ಪಿಸಿ, ಅವರನ್ನು ನಿಮ್ಮ ಮುಂದೆ ಹೊರಗೆ ಹಾಕಿ, ಅವರ ದೇಶವನ್ನು ನಿಮಗೆ ಕೊಟ್ಟೆನು.</verse>
				<verse number="10">‘ನಾನೇ ನಿಮ್ಮ ದೇವರಾದ ಯೆಹೋವ ದೇವರು. ನೀವು ವಾಸಿಸಿರುವ ಅಮೋರಿಯರ ದೇಶದ ದೇವರುಗಳಿಗೆ ಭಯಪಡಬೇಡಿರಿ,’ ಎಂದು ನಾನು ಹೇಳಿದೆನು. ಆದರೆ ನೀವು ನನ್ನ ಸ್ವರವನ್ನು ಕೇಳದೆ ಹೋದಿರಿ,” ಎಂದು ಹೇಳಿದನು.</verse>
				<verse number="11">ಯೆಹೋವ ದೇವರ ದೂತನು ಬಂದು ಅಬೀಯೆಜೆರನಾದ ಯೋವಾಷನಿಗೆ ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷಿಯ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.</verse>
				<verse number="12">ಆಗ ಯೆಹೋವ ದೇವರ ದೂತನು ಗಿದ್ಯೋನನಿಗೆ ಪ್ರತ್ಯಕ್ಷವಾಗಿ ಅವನಿಗೆ, “ಬಲಿಷ್ಠನಾದ ಪರಾಕ್ರಮಶಾಲಿಯೇ, ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.</verse>
				<verse number="13">ಆಗ ಗಿದ್ಯೋನನು ಅವನಿಗೆ, “ಒಡೆಯನೇ, ಕ್ಷಮಿಸಿರಿ, ಯೆಹೋವ ದೇವರು ನಮ್ಮ ಸಂಗಡ ಇದ್ದರೆ, ಇದೆಲ್ಲಾ ನಮಗೆ ಏಕೆ ಸಂಭವಿಸಿತು? ಯೆಹೋವ ದೇವರು ನಮ್ಮನ್ನು ಈಜಿಪ್ಟಿನಿಂದ ಬರಮಾಡಲಿಲ್ಲವೋ? ಎಂದು ನಮ್ಮ ಪಿತೃಗಳು ನಮಗೆ ವಿವರಿಸಿ ಹೇಳಿದಂಥ ಅದ್ಭುತಗಳು ಎಲ್ಲಿ? ಈಗ ಯೆಹೋವ ದೇವರು ನಮ್ಮನ್ನು ಕೈಬಿಟ್ಟು, ಮಿದ್ಯಾನ್ಯರ ಕೈಗೆ ನಮ್ಮನ್ನು ಒಪ್ಪಿಸಿದ್ದಾರೆ,” ಎಂದನು.</verse>
				<verse number="14">ಯೆಹೋವ ದೇವರು ಅವನನ್ನು ದೃಷ್ಟಿಸಿ ನೋಡಿ, “ನಿನಗಿರುವ ಈ ಶಕ್ತಿಯಲ್ಲಿ ಹೋಗು, ನೀನು ಇಸ್ರಾಯೇಲನ್ನು ಮಿದ್ಯಾನ್ಯರ ಕೈಯಿಂದ ತಪ್ಪಿಸಿ ರಕ್ಷಿಸುವೆ; ನಾನು ನಿನ್ನನ್ನು ಕಳುಹಿಸಲಿಲ್ಲವೋ?” ಎಂದರು.</verse>
				<verse number="15">ಅದಕ್ಕವನು ಅವರಿಗೆ, “ನನ್ನ ಒಡೆಯನೇ, ಕ್ಷಮಿಸಿರಿ ನಾನು ಇಸ್ರಾಯೇಲನ್ನು ಹೇಗೆ ರಕ್ಷಿಸಲಿ? ಮನಸ್ಸೆಯಲ್ಲಿ ನನ್ನ ಕುಟುಂಬವು ಬಡತನದ್ದು. ನನ್ನ ತಂದೆಯ ಮನೆಯಲ್ಲಿ ನಾನು ಅಲ್ಪನು,” ಎಂದನು.</verse>
				<verse number="16">ಆದರೆ ಯೆಹೋವ ದೇವರು ಅವನಿಗೆ, “ನಾನು ನಿನ್ನ ಸಂಗಡ ಖಂಡಿತವಾಗಿ ಇರುವುದರಿಂದ ನೀನು ಮಿದ್ಯಾನ್ಯರನ್ನು ಒಬ್ಬ ಮನುಷ್ಯನೋ ಎಂಬಂತೆ ಹೊಡೆಯುವಿ,” ಎಂದರು.</verse>
				<verse number="17">ಅದಕ್ಕವನು, “ಈಗ ನಿಮ್ಮ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ, ನನ್ನ ಸಂಗಡ ಮಾತನಾಡುವವರು ನೀವು ಎಂಬುದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು.</verse>
				<verse number="18">ನಾನು ನಿಮ್ಮ ಬಳಿಗೆ ನನ್ನ ಕಾಣಿಕೆಯನ್ನು ತಂದು, ನಿಮ್ಮ ಮುಂದೆ ಇಡುವವರೆಗೆ ನೀವು ಈ ಸ್ಥಳವನ್ನು ಬಿಟ್ಟುಹೋಗಬಾರದು,” ಎಂದು ಬೇಡಿಕೊಂಡನು. ಅದಕ್ಕೆ ಯೆಹೋವ ದೇವರು, “ನೀನು ತಿರುಗಿ ಬರುವ ತನಕ ನಾನು ಕಾದಿರುವೆನು,” ಎಂದರು.</verse>
				<verse number="19">ಆಗ ಗಿದ್ಯೋನನು ಒಳಗೆ ಹೋಗಿ, ಒಂದು ಮೇಕೆಯ ಮರಿಯನ್ನೂ, ಹದಿನಾರು ಕಿಲೋಗ್ರಾಂ ಹಿಟ್ಟಿನಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ಸಿದ್ಧಮಾಡಿ, ಮಾಂಸವನ್ನು ಪುಟ್ಟಿಯಲ್ಲಿ ಇಟ್ಟು, ರಸವನ್ನು ಪಾತ್ರೆಯಲ್ಲಿ ಹೊಯ್ದು, ಅದನ್ನು ಹೊರಗೆ ಏಲಾ ಮರದ ಕೆಳಗೆ ಇದ್ದ ಅವರ ಬಳಿಯಲ್ಲಿ ತಂದಿಟ್ಟನು.</verse>
				<verse number="20">ದೇವದೂತನು ಅವನಿಗೆ, “ನೀನು ಮಾಂಸವನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ತೆಗೆದುಕೊಂಡು ಈ ಬಂಡೆಯ ಮೇಲೆ ಇಟ್ಟು, ರಸವನ್ನು ಸುರಿ,” ಎಂದನು. ಅವನು ಹಾಗೆಯೇ ಮಾಡಿದನು.</verse>
				<verse number="21">ಆಗ ಯೆಹೋವ ದೇವರ ದೂತನು ತನ್ನ ಕೈಯಲ್ಲಿದ್ದ ಕೋಲಿನ ಕೊನೆಯನ್ನು ಚಾಚಿ, ಮಾಂಸವನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ಮುಟ್ಟಿದನು. ಆಗ ಬೆಂಕಿಯು ಬಂಡೆಯಿಂದ ಎದ್ದು, ಮಾಂಸವನ್ನೂ, ಹುಳಿಯಿಲ್ಲದ ರೊಟ್ಟಿಗಳನ್ನೂ ದಹಿಸಿಬಿಟ್ಟಿತು. ಆಗ ಯೆಹೋವ ದೇವರ ದೂತನು ಅವನ ಕಣ್ಣುಗಳಿಗೆ ಕಾಣಿಸದೆ ಹೋದನು.</verse>
				<verse number="22">ಅವನು ಯೆಹೋವ ದೇವರ ದೂತನೆಂದು ಗಿದ್ಯೋನನು ತಿಳಿದಾಗ ಗಿದ್ಯೋನನು, “ಸಾರ್ವಭೌಮ ಯೆಹೋವ ದೇವರೇ, ನಾನು ಯೆಹೋವ ದೇವರ ದೂತನನ್ನು ಮುಖಾಮುಖಿಯಾಗಿ ಕಂಡೆನು,” ಎಂದನು.</verse>
				<verse number="23">ಆದರೆ ಯೆಹೋವ ದೇವರು ಅವನಿಗೆ, “ನಿನಗೆ ಸಮಾಧಾನವಾಗಲಿ; ಭಯಪಡಬೇಡ, ನೀನು ಸಾಯುವುದಿಲ್ಲ,” ಎಂದರು.</verse>
				<verse number="24">ಗಿದ್ಯೋನನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿ, “ಯೆಹೋವ ಶಾಲೋಮ್” ಎಂದು ಅದಕ್ಕೆ ಹೆಸರಿಟ್ಟನು. ಅದು ಈವರೆಗೂ ಅಬೀಯೆಜೆರ್ ಒಫ್ರದಲ್ಲಿ ಇನ್ನೂ ಇದೆ.</verse>
				<verse number="25">ಅದೇ ರಾತ್ರಿಯಲ್ಲಿ ಯೆಹೋವ ದೇವರು ಅವನಿಗೆ, “ನೀನು ನಿನ್ನ ತಂದೆಗಿರುವ ಎತ್ತುಗಳಲ್ಲಿ ಎಳೆಯದಾದ ಏಳು ವರ್ಷದ ಎರಡನೆಯ ಹೋರಿಯನ್ನು ತೆಗೆದುಕೊಂಡುಹೋಗಿ, ನಿನ್ನ ತಂದೆಗೆ ಇರುವ ಬಾಳನ ಬಲಿಪೀಠವನ್ನು ಕೆಡವಿ, ಅದರ ಸಮೀಪದಲ್ಲಿರುವ ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಿ,</verse>
				<verse number="26">ಈ ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿ, ಆ ಎರಡನೆಯ ಹೋರಿಯನ್ನು ತಂದು, ನೀನು ಕಡಿದುಹಾಕಿದ ಅಶೇರ ಸ್ತಂಭವನ್ನು ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು,” ಎಂದರು.</verse>
				<verse number="27">ಆಗ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ತೆಗೆದುಕೊಂಡು, ಯೆಹೋವ ದೇವರು ತನಗೆ ಹೇಳಿದ ಹಾಗೆಯೇ ಮಾಡಿದನು. ಆದರೆ ಅವನು ತನ್ನ ತಂದೆಯ ಮನೆಯವರೆಗೂ, ಆ ಊರಿನ ಮನುಷ್ಯರಿಗೂ ಭಯಪಟ್ಟದ್ದರಿಂದ ಹಗಲಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.</verse>
				<verse number="28">ಆ ಊರಿನ ಮನುಷ್ಯರು ಬೆಳಿಗ್ಗೆ ಎದ್ದಾಗ, ಬಾಳನ ಬಲಿಪೀಠವು ಕೆಡವಲಾಗಿದ್ದನ್ನು ಮತ್ತು ಅದರ ಪಕ್ಕದಲ್ಲಿದ್ದ ಅಶೇರ ಸ್ತಂಭವನ್ನು ಕಡಿಯಲಾಗಿರುವುದನ್ನು ಕಂಡರು. ಹೊಸದಾಗಿ ಕಟ್ಟಿದ ಬಲಿಪೀಠದ ಮೇಲೆ ಆ ಎರಡನೆಯ ಹೋರಿಯ ಬಲಿ ಅರ್ಪಿಸಲಾಗಿತ್ತು.</verse>
				<verse number="29">ಆಗ ಅವರು ಒಬ್ಬರಿಗೊಬ್ಬರು, “ಈ ಕಾರ್ಯವನ್ನು ಮಾಡಿದವನ್ಯಾರು?” ಎಂದರು. ವಿಚಾರಿಸಿ ಕೇಳಿದಾಗ, ಅವರು, “ಯೋವಾಷನ ಮಗ ಗಿದ್ಯೋನನು ಈ ಕಾರ್ಯ ಮಾಡಿದನು,” ಎಂದರು.</verse>
				<verse number="30">ಆ ಊರಿನವರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ತೆಗೆದುಕೊಂಡು ಬಾ, ಅವನು ಸಾಯಬೇಕು. ಏಕೆಂದರೆ ಬಾಳನ ಬಲಿಪೀಠವನ್ನು ಕೆಡವಿ, ಅದರ ಬಳಿಯಲ್ಲಿದ್ದ ಅಶೇರ ಸ್ತಂಭವನ್ನು ಕಡಿದುಹಾಕಿದನು,” ಎಂದರು.</verse>
				<verse number="31">ಆದರೆ ಯೋವಾಷನು ತನಗೆ ವಿರೋಧವಾಗಿ ನಿಂತಿದ್ದ ಸಮಸ್ತರಿಗೂ, “ನೀವು ಬಾಳನಿಗಾಗಿ ವ್ಯಾಜ್ಯವಾಡುವಿರೋ? ನೀವು ಅವನನ್ನು ರಕ್ಷಿಸುವಿರೋ? ಅವನಿಗಾಗಿ ವ್ಯಾಜ್ಯ ಮಾಡುವವನು ಈ ಉದಯಕಾಲದಲ್ಲೇ ಹತನಾಗಲಿ. ಅವನು ದೇವರಾದರೆ ತನ್ನ ಬಲಿಪೀಠವನ್ನು ಕೆಡವಿದ್ದರಿಂದ, ಅವನು ತನ್ನನ್ನು ರಕ್ಷಿಸಿಕೊಳ್ಳಲಿ” ಎಂದನು.</verse>
				<verse number="32">ಗಿದ್ಯೋನನು ಬಾಳನ ಬಲಿಪೀಠವನ್ನು ಕೆಡವಿದ ಕಾರಣ ಅವರು ಆ ದಿವಸದಲ್ಲಿ, “ಬಾಳನೇ ವ್ಯಾಜ್ಯವಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ಯೆರುಬ್ಬಾಳ ಎಂಬ ಹೆಸರಾಯಿತು.</verse>
				<verse number="33">ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಒಟ್ಟಾಗಿ ಕೂಡಿ, ಯೊರ್ದನ್ ಹೊಳೆ ದಾಟಿ ಬಂದು, ಇಜ್ರೆಯೇಲ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.</verse>
				<verse number="34">ಆದರೆ ಯೆಹೋವ ದೇವರ ಆತ್ಮರು ಗಿದ್ಯೋನನ ಮೇಲೆ ಬಂದರು. ಅವನು ತುತೂರಿಯನ್ನು ಊದಿದಾಗ, ಅಬೀಯೆಜೆರಿನವರು ಅವನ ಹಿಂದೆ ಕೂಡಿಬಂದರು.</verse>
				<verse number="35">ಮನಸ್ಸೆಯವರ ಬಳಿ ದೂತರನ್ನು ಕಳುಹಿಸಿದಾಗ, ಅವರು ಅವನ ಹಿಂದೆ ಕೂಡಿಬಂದರು. ಆಶೇರ್, ಜೆಬುಲೂನಿನಲ್ಲಿಯೂ, ನಫ್ತಾಲಿನಲ್ಲಿಯೂ ದೂತರನ್ನು ಕಳುಹಿಸಲು, ಅವರು ಇವರಿಗೆ ಭೇಟಿಯಾಗಲು ಬಂದರು.</verse>
				<verse number="36">ಗಿದ್ಯೋನನು ದೇವರಿಗೆ, “ನೀವು ಹೇಳಿದ ಹಾಗೆಯೇ ನನ್ನ ಕೈಯಿಂದ ಇಸ್ರಾಯೇಲನನ್ನು ರಕ್ಷಿಸುವಿರಿಯಾದರೆ,</verse>
				<verse number="37">ಇಗೋ, ಉಣ್ಣೆಯ ತುಪ್ಪಟವನ್ನು ಕಣದಲ್ಲಿ ಹಾಕುವೆನು. ಮಂಜು ಉಣ್ಣೆಯ ಮೇಲೆ ಮಾತ್ರವೇ ಇದ್ದು ಭೂಮಿಯೆಲ್ಲಾ ಒಣಗಿದ್ದರೆ, ಆಗ ನೀವು ಹೇಳಿದ ಹಾಗೆ ಇಸ್ರಾಯೇಲನ್ನು ನನ್ನ ಕೈಯಿಂದ ನೀವು ರಕ್ಷಿಸುವಿರಿ ಎಂಬುದನ್ನು ನಾನು ತಿಳಿಯುವೆನು,” ಎಂದನು.</verse>
				<verse number="38">ಅದು ಹಾಗೆಯೇ ಆಯಿತು. ಅವನು ಮರುದಿವಸ ಉದಯದಲ್ಲಿ ಎದ್ದು, ಉಣ್ಣೆಯ ತುಪ್ಪಟವನ್ನು ತೆಗೆದುಕೊಂಡು, ಅದರೊಳಗಿದ್ದ ಮಂಜಿನ ನೀರನ್ನು ಒಂದು ಬೋಗುಣಿಯ ತುಂಬಾ ಹಿಂಡಿದನು.</verse>
				<verse number="39">ಗಿದ್ಯೋನನು ದೇವರಿಗೆ, “ನಾನು ಇನ್ನೊಂದು ಸಾರಿ ಮಾತನಾಡುವುದರಿಂದ ನಿಮ್ಮ ಕೋಪವು ನನ್ನ ಮೇಲೆ ಉರಿಯಬಾರದು. ಉಣ್ಣೆಯ ತುಪ್ಪಟದಿಂದ ಇನ್ನೊಂದು ಸಾರಿ ನಾನು ನಿಮ್ಮನ್ನು ಶೋಧಿಸುವೆನು. ತುಪ್ಪಟ ಮಾತ್ರವೇ ಒಣಗುವ ಹಾಗೆಯೂ ಭೂಮಿಯಲ್ಲೆಲ್ಲಾ ಮಂಜು ಇರುವ ಹಾಗೆಯೂ ಅಪ್ಪಣೆ ಆಗಲಿ,” ಎಂದನು.</verse>
				<verse number="40">ಆ ರಾತ್ರಿ ದೇವರು ಹಾಗೆಯೇ ಮಾಡಿದರು. ತುಪ್ಪಟ ಮಾತ್ರ ಒಣಗಿತ್ತು, ನೆಲದ ಮೇಲೆಲ್ಲಾ ಹನಿಬಿದ್ದಿತ್ತು.</verse>
			</chapter>
			<chapter number="7">
				<verse number="1">ಗಿದ್ಯೋನನೆಂಬ ಯೆರುಬ್ಬಾಳನೂ, ಅವನ ಸಂಗಡ ಇದ್ದ ಜನರೆಲ್ಲರೂ ಉದಯದಲ್ಲಿ ಎದ್ದು, ಹೆರೋದಿನ ಬಾವಿಯ ಬಳಿಯಲ್ಲಿ ದಂಡಿಳಿಸಿದರು. ಮಿದ್ಯಾನ್ಯರ ದಂಡು ಅವರಿಗೆ ಉತ್ತರಕ್ಕೆ ಮೋರೆ ಬೆಟ್ಟದ ತಗ್ಗಿನಲ್ಲಿ ಇಳಿದಿತ್ತು.</verse>
				<verse number="2">ಆಗ ಯೆಹೋವ ದೇವರು ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಬಹಳವಾಗಿದ್ದಾರೆ, ನಾನು ಮಿದ್ಯಾನ್ಯರನ್ನು ಜನರ ಕೈಗಳಿಗೆ ಒಪ್ಪಿಸಿಕೊಡುವುದಕ್ಕೆ ಸಾಧ್ಯವಿಲ್ಲ ಇಸ್ರಾಯೇಲರು, ‘ನನ್ನ ಕೈ ನನ್ನನ್ನು ರಕ್ಷಿಸಿತು,’ ಎಂದು ನನಗೆ ವಿರೋಧವಾಗಿ ಹೆಚ್ಚಳಪಟ್ಟಾರು.</verse>
				<verse number="3">ಆದ್ದರಿಂದ ನೀನು ಹೋಗಿ ಜನರು ಕೇಳುವ ಹಾಗೆ, ‘ಯಾವನಿಗೆ ಭಯವೂ, ಹೆದರಿಕೆಯೂ ಉಂಟೋ ಅವನು ತಿರುಗಿ ತ್ವರೆಯಾಗಿ ಗಿಲ್ಯಾದ್ ಬೆಟ್ಟದಿಂದ ಹೋಗಲಿ,’ ಎಂದು ಪ್ರಕಟಮಾಡು,” ಎಂದರು. ಆಗ ಜನರಲ್ಲಿ ಇಪ್ಪತ್ತೆರಡು ಸಾವಿರ ಜನರು ತಿರುಗಿ ಹೋದರು; ನಂತರ ಹತ್ತು ಸಾವಿರ ಜನರು ಉಳಿದರು.</verse>
				<verse number="4">ಯೆಹೋವ ದೇವರು ಗಿದ್ಯೋನನಿಗೆ, “ಜನರು ಇನ್ನೂ ತುಂಬ ಇದ್ದರೆ; ಅವರನ್ನು ಹತ್ತಿರದ ಹಳ್ಳಕ್ಕೆ ಕರೆದುಕೊಂಡು ಹೋಗು. ಅಲ್ಲಿ ನಾನು ಅವರನ್ನು ನಿನಗೋಸ್ಕರ ಪರೀಕ್ಷೆಮಾಡಿ ಆರಿಸುವೆನು. ನಿನ್ನ ಸಂಗಡ ಹೋಗುವವರಲ್ಲಿ ಯಾವನನ್ನು ಕುರಿತು ಹೇಳುವೆನೋ, ಅವನು ನಿನ್ನ ಸಂಗಡ ಹೋಗಲಿ. ಆದರೆ ನಾನು ನಿನ್ನ ಸಂಗಡ ಬರಬಾರದೆಂದು ಯಾವನನ್ನು ಕುರಿತು ಹೇಳುವೆನೋ, ಅವನು ಹೋಗಬಾರದು,” ಎಂದರು.</verse>
				<verse number="5">ಗಿದ್ಯೋನನು ಜನರನ್ನು ಹಳ್ಳದ ಬಳಿಗೆ ಕರಕೊಂಡು ಬಂದನು. ಆಗ ಯೆಹೋವ ದೇವರು ಗಿದ್ಯೋನನಿಗೆ, “ನಾಯಿ ನೆಕ್ಕುವ ಹಾಗೆ ಜಲವನ್ನು ತನ್ನ ನಾಲಿಗೆಯಿಂದ ನೆಕ್ಕುವ ಪ್ರತಿಯೊಬ್ಬನನ್ನೂ, ಕುಡಿಯುವುದಕ್ಕೆ ಮೊಣಕಾಲೂರಿ ಬಗ್ಗುವ ಪ್ರತಿಯೊಬ್ಬನನ್ನೂ ಬೇರೆಬೇರೆಯಾಗಿ ನಿಲ್ಲಿಸು,” ಎಂದರು.</verse>
				<verse number="6">ಆಗ ನೀರನ್ನು ತಮ್ಮ ಕೈಯಿಂದ ತೆಗೆದುಕೊಂಡು, ತಮ್ಮ ಬಾಯಿಗೆ ಎತ್ತಿ ನೆಕ್ಕಿದವರು ಮುನ್ನೂರು ಜನ, ಉಳಿದ ಜನರೆಲ್ಲಾ ನೀರು ಕುಡಿಯುವುದಕ್ಕೆ ಮೊಣಕಾಲೂರಿ ಬಗ್ಗಿದರು.</verse>
				<verse number="7">ಆಗ ಯೆಹೋವ ದೇವರು ಗಿದ್ಯೋನನಿಗೆ, “ನೆಕ್ಕಿ ಕುಡಿದ ಆ ಮುನ್ನೂರು ಜನರಿಂದ ನಾನು ನಿಮ್ಮನ್ನು ರಕ್ಷಿಸಿ, ಮಿದ್ಯಾನ್ಯರನ್ನು ನಿನ್ನ ಕೈಯಲ್ಲಿ ಒಪ್ಪಿಸುವೆನು. ಇತರ ಜನರೆಲ್ಲಾ ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ,” ಎಂದರು.</verse>
				<verse number="8">ಆಗ ಜನರು ಆಹಾರವನ್ನೂ, ತಮ್ಮ ತುತೂರಿಗಳನ್ನೂ ತಮ್ಮ ಕೈಗಳಲ್ಲಿ ತೆಗೆದುಕೊಂಡರು. ಆದರೆ ಗಿದ್ಯೋನನು ಇಸ್ರಾಯೇಲರನ್ನೆಲ್ಲಾ ಅವರವರ ಗುಡಾರಗಳಿಗೆ ಕಳುಹಿಸಿ, ಆ ಮುನ್ನೂರು ಜನರನ್ನು ಇಟ್ಟುಕೊಂಡನು. ಮಿದ್ಯಾನ್ಯರ ದಂಡು ಅವನಿಗೆ ಕೆಳಭಾಗದ ಕಣಿವೆಯಲ್ಲಿ ಇತ್ತು.</verse>
				<verse number="9">ಆಗ ರಾತ್ರಿಯಲ್ಲಿ, ಯೆಹೋವ ದೇವರು ಅವನಿಗೆ, “ನೀನು ಎದ್ದು ಪಾಳೆಗೆ ವಿರೋಧವಾಗಿ ಇಳಿದು ಹೋಗು. ಏಕೆಂದರೆ ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ.</verse>
				<verse number="10">ಇಳಿದು ಹೋಗುವುದಕ್ಕೆ ನೀನು ಭಯಪಟ್ಟರೆ, ಮೊದಲು ನೀನು ನಿನ್ನ ಸೇವಕನಾದ ಪುರನ ಸಂಗಡ ಪಾಳೆಯ ಬಳಿಗೆ ಇಳಿದು ಹೋಗಿ,</verse>
				<verse number="11">ಅವರು ಮಾತನಾಡುವುದನ್ನು ಕೇಳು. ತರುವಾಯ ಪಾಳೆಯಲ್ಲಿ ಇಳಿದು ಹೋಗುವುದಕ್ಕೆ ನಿನ್ನ ಕೈಗಳು ಬಲಗೊಳ್ಳುವುವು,” ಎಂದರು. ಹಾಗೆಯೇ ಅವನು ತನ್ನ ಸೇವಕನಾದ ಪುರನ ಸಂಗಡ ಪಾಳೆಯ ಹೊರಗಿರುವ ಸೈನಿಕರ ಬಳಿಗೆ ಹೋದನು.</verse>
				<verse number="12">ಮಿದ್ಯಾನ್ಯರೂ, ಅಮಾಲೇಕ್ಯರೂ, ಪೂರ್ವದೇಶದ ಜನರೆಲ್ಲರೂ ಮಿಡತೆಗಳಷ್ಟು ಗುಂಪಾಗಿ ತಗ್ಗಿನಲ್ಲಿ ಮಲಗಿದ್ದರು. ಅವರ ಒಂಟೆಗಳು ಸಮುದ್ರದ ಮರಳಿನ ಹಾಗೆ ಅಸಂಖ್ಯವಾಗಿದ್ದವು.</verse>
				<verse number="13">ಗಿದ್ಯೋನನು ಬಂದಾಗ, ಒಬ್ಬನು ತನ್ನ ಜೊತೆಗಾರನಿಗೆ ತನಗಾದ ಸ್ವಪ್ನವನ್ನು ವಿವರಿಸಿ ಹೇಳಿದ್ದೇನೆಂದರೆ, “ಇಗೋ, ನಾನು ಒಂದು ಕನಸನ್ನು ಕಂಡೆನು. ಒಂದು ಜವೆಗೋಧಿಯ ರೊಟ್ಟಿಯು ಮಿದ್ಯಾನ್ಯರ ಪಾಳೆಯ ಮೇಲೆ ಹೊರಳಿ, ಒಂದು ಡೇರೆಯ ಮೇಲೆ ಬಂದು, ಅದು ಬೀಳುವ ಹಾಗೆ ಅದನ್ನು ಹೊಡೆದು, ಅದನ್ನು ಕೆಡವಿ ಹಾಕಿತು. ಆಗ ಡೇರೆಯು ಬಿದ್ದುಹೋಯಿತು,” ಎಂದನು.</verse>
				<verse number="14">ಅವನ ಜೊತೆಗಾರನು ಉತ್ತರಕೊಟ್ಟು, “ಇದು ಯೋವಾಷನ ಮಗನಾದ ಗಿದ್ಯೋನನೆಂಬ ಇಸ್ರಾಯೇಲಿನ ಮನುಷ್ಯನ ಖಡ್ಗವೇ ಹೊರತು ಬೇರೆ ಅಲ್ಲ. ದೇವರು ಮಿದ್ಯಾನ್ಯರನ್ನೂ, ಈ ಸಮಸ್ತ ಪಾಳೆಯನ್ನೂ ಅವನ ಕೈಯಲ್ಲಿ ಒಪ್ಪಿಸಿಕೊಟ್ಟರು,” ಎಂದನು.</verse>
				<verse number="15">ಗಿದ್ಯೋನನು ಆ ಕನಸಿನ ವಿವರವನ್ನೂ, ಅದರ ಅರ್ಥವನ್ನೂ ಕೇಳಿದಾಗ, ಅವನು ಯೆಹೋವ ದೇವರನ್ನು ಆರಾಧಿಸಿ, ಇಸ್ರಾಯೇಲ್ ಪಾಳೆಗೆ ತಿರುಗಿಬಂದು, “ಏಳಿರಿ, ಯೆಹೋವ ದೇವರು ಮಿದ್ಯಾನ್ಯರ ಪಾಳೆಯನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾರೆ,” ಎಂದು ಹೇಳಿದನು.</verse>
				<verse number="16">ಆ ಮುನ್ನೂರು ಜನರನ್ನು ಮೂರು ಭಾಗವಾಗಿ ಹಂಚಿ, ಎಲ್ಲರ ಕೈಯಲ್ಲಿ ತುತೂರಿಗಳನ್ನೂ, ಬರಿದಾದ ಕೊಡಗಳನ್ನೂ, ಅವುಗಳಲ್ಲಿ ಇಡುವ ಪಂಜುಗಳನ್ನೂ ಕೊಟ್ಟನು.</verse>
				<verse number="17">ಅನಂತರ ಗಿದ್ಯೋನನು, “ನಾನು ಮಾಡುವುದನ್ನು ನೋಡಿ ಹಾಗೆಯೇ ನೀವೂ ಮಾಡಿರಿ. ನಾನು ಪಾಳೆಯ ಹೊರಗೆ ಬಂದಾಗ ಹೇಗೆ ಮಾಡುವೆನೋ, ಹಾಗೆಯೇ ನೀವೂ ಮಾಡಿರಿ.</verse>
				<verse number="18">ನಾನೂ, ನನ್ನ ಸಂಗಡ ಇರುವವರೆಲ್ಲರೂ ತುತೂರಿಯನ್ನು ಊದುವಾಗ, ನೀವೆಲ್ಲರೂ ಪಾಳೆಯ ಸುತ್ತಲೂ, ಎಲ್ಲಾ ಕಡೆಯಲ್ಲಿಯೂ ತುತೂರಿಗಳನ್ನು ಊದಿ, ‘ಯೆಹೋವ ದೇವರಿಗಾಗಿ, ಗಿದ್ಯೋನನಿಗಾಗಿ,’ ಎಂದು ಕೂಗಿರಿ,” ಎಂದನು.</verse>
				<verse number="19">ಮಧ್ಯರಾತ್ರಿ ಆರಂಭದ ಜಾವದಲ್ಲಿ ಕಾವಲುಗಾರರನ್ನು ಬದಲಾಯಿಸಿದಾಗ, ಗಿದ್ಯೋನನೂ, ಅವನ ಸಂಗಡ ಇದ್ದ ನೂರು ಮಂದಿಯೂ ಪಾಳೆಯ ಹೊರಗೆ ಬಂದು, ತುತೂರಿಗಳನ್ನು ಊದಿ, ತಮ್ಮ ಕೈಯಲ್ಲಿದ್ದ ಕೊಡಗಳನ್ನು ಒಡೆದರು.</verse>
				<verse number="20">ಈ ಮೂರು ಗುಂಪಿನ ಜನರು ತುತೂರಿಗಳನ್ನು ಊದಿ, ಆ ಕೊಡಗಳನ್ನು ಒಡೆದುಬಿಟ್ಟು, ಪಂಜುಗಳನ್ನು ತಮ್ಮ ಎಡಗೈಯಲ್ಲಿಯೂ, ಊದುವ ತುತೂರಿಗಳನ್ನು ತಮ್ಮ ಬಲಗೈಯಲ್ಲಿಯೂ ಹಿಡಿದು, “ಯೆಹೋವ ದೇವರಿಗಾಗಿ ಖಡ್ಗ, ಗಿದ್ಯೋನನಿಗಾಗಿ ಖಡ್ಗ,” ಎಂದು ಕೂಗಿ ಪಾಳೆಯ ಸುತ್ತಲೂ ಅವರವರ ಸ್ಥಳದಲ್ಲಿ ನಿಂತರು.</verse>
				<verse number="21">ಆಗ ಪಾಳೆಯದವರಾದರೋ ಕೂಗುತ್ತಾ ಓಡಿಹೋದರು.</verse>
				<verse number="22">ಮುನ್ನೂರು ಜನರು ತುತೂರಿಗಳನ್ನು ಊದುವಾಗ, ಯೆಹೋವ ದೇವರು ಪಾಳೆಯದಲ್ಲಿ ಎಲ್ಲೆಲ್ಲಿಯೂ ಒಬ್ಬನ ಖಡ್ಗವನ್ನು ಒಬ್ಬನ ಮೇಲೆ ಬರಮಾಡಿದರು. ಪಾಳೆಯ ಚೆರೇರಿನಲ್ಲಿರುವ ಬೇತ್ ಷಿಟ್ಟದವರೆಗೂ, ಟಬ್ಬಾತಿನ ಬಳಿಯಲ್ಲಿರುವ ಆಬೇಲ್ ಮೆಹೋಲಾದ ಮೇರೆಯವರೆಗೂ ಓಡಿಹೋಯಿತು.</verse>
				<verse number="23">ಇಸ್ರಾಯೇಲರು ನಫ್ತಾಲಿಯಿಂದಲೂ, ಆಶೇರನಿಂದಲೂ, ಸಮಸ್ತ ಮನಸ್ಸೆಯವರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.</verse>
				<verse number="24">ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಬೆಟ್ಟದಲ್ಲೆಲ್ಲಾ ದೂತರನ್ನು ಕಳುಹಿಸಿ, “ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ, ಬೇತ್‌ಬಾರದವರೆಗಿರುವ ನೀರನ್ನೂ, ಯೊರ್ದನನ್ನೂ ಅವರಿಗೆ ಮುಂದಾಗಿ ಹಿಡಿಯಿರಿ,” ಎಂದು ಹೇಳಿದನು. ಹಾಗೆಯೇ ಎಫ್ರಾಯೀಮನ ಜನರೆಲ್ಲರೂ ಕೂಡಿಕೊಂಡು, ಬೇತ್‌ಬಾರದವರೆಗೆ ನೀರನ್ನೂ, ಯೊರ್ದನನ್ನೂ ಹಿಡಿದರು.</verse>
				<verse number="25">ಮಿದ್ಯಾನ್ಯರ ಇಬ್ಬರು ಅಧಿಪತಿಗಳಾದ ಓರೇಬನನ್ನೂ, ಜೇಬನನ್ನೂ ಹಿಡಿದು, ಓರೇಬನನ್ನು ಓರೇಬೆಂಬ ಬಂಡೆಯಲ್ಲಿಯೂ, ಜೇಬನನ್ನು ಜೇಬನ ದ್ರಾಕ್ಷಿಯ ಆಲೆಯ ಬಳಿಯಲ್ಲಿಯೂ ಕೊಂದುಹಾಕಿ, ಮಿದ್ಯಾನ್ಯರನ್ನು ಹಿಂದಟ್ಟಿ, ಓರೇಬ್, ಜೇಬರ ತಲೆಗಳನ್ನು ಯೊರ್ದನಿಗೆ ಈಚೆಯಲ್ಲಿದ್ದ ಗಿದ್ಯೋನನ ಬಳಿಗೆ ತಂದರು.</verse>
			</chapter>
			<chapter number="8">
				<verse number="1">ಆಗ ಎಫ್ರಾಯೀಮ್ಯರು, “ನೀನು ಮಿದ್ಯಾನ್ಯರ ಮೇಲೆ ಯುದ್ಧಮಾಡುವುದಕ್ಕೆ ಹೋಗುವಾಗ, ನಮ್ಮನ್ನು ಕರೆಯದೆ ಹೋದದ್ದೇನು?” ಎಂದು ಹೇಳಿ ಅವನ ಸಂಗಡ ತೀಕ್ಷ್ಣವಾಗಿ ವಿವಾದ ಮಾಡಿದರು.</verse>
				<verse number="2">ಅವನು ಅವರಿಗೆ, “ನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿದೆನು? ಅಬೀಯೆಜೆರನ ದ್ರಾಕ್ಷಿ ಫಲ ಕೂಡಿಸುವುದಕ್ಕಿಂತ ಎಫ್ರಾಯೀಮನ ಉಳಿದ ದ್ರಾಕ್ಷಿಗಳನ್ನು ಸಂಗ್ರಹಿಸುವುದು ಉತ್ತಮವಲ್ಲವೇ?</verse>
				<verse number="3">ದೇವರು ನಿಮ್ಮ ಕೈಯಲ್ಲಿ ಮಿದ್ಯಾನ್ಯರ ಪ್ರಧಾನರಾದ ಓರೇಬನನ್ನೂ, ಜೇಬನನ್ನೂ ಒಪ್ಪಿಸಿಕೊಡಲಿಲ್ಲವೇ? ನೀವು ಮಾಡಿದ್ದಕ್ಕೆ ನಾನು ಮಾಡಿದ್ದು ಎಷ್ಟು?” ಎಂದನು. ಅವನು ಈ ಮಾತು ಹೇಳಿದಾಗ, ಅವನ ವಿಷಯವಾಗಿ ಅವರ ಕೋಪವು ಶಾಂತವಾಯಿತು.</verse>
				<verse number="4">ಗಿದ್ಯೋನನು ಯೊರ್ದನಿಗೆ ಬಂದು ಅದನ್ನು ದಾಟಿ; ಅವನೂ, ಅವನ ಸಂಗಡ ಇದ್ದ ಮುನ್ನೂರು ಜನರೂ ದಣಿದವರಾಗಿಯೂ, ಹಿಂದಟ್ಟುವವರಾಗಿಯೂ ಇದ್ದರು.</verse>
				<verse number="5">ಅವನು ಸುಕ್ಕೋತನವರಿಗೆ, “ದಯಮಾಡಿ ನನ್ನ ಕೂಡ ಇರುವ ಜನರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ. ಏಕೆಂದರೆ ಅವರು ದಣಿದಿದ್ದಾರೆ. ನಾನು ಮಿದ್ಯಾನ್ಯರ ಅರಸುಗಳಾದ ಜೆಬಹನನ್ನೂ, ಚಲ್ಮುನ್ನನನ್ನೂ ಹಿಂದಟ್ಟುತ್ತೇನೆ,” ಎಂದನು.</verse>
				<verse number="6">ಆದರೆ ಸುಕ್ಕೋತಿನ ಪ್ರಧಾನರು ಅವನಿಗೆ, “ನಿನ್ನ ಸೈನ್ಯಕ್ಕೆ ನಾವು ರೊಟ್ಟಿ ಕೊಡುವಂತೆ ಜೆಬಹ ಚಲ್ಮುನ್ನರ ಕೈ ನಿನ್ನ ಕೈವಶವಾಗಿದೆಯೋ?” ಎಂದರು.</verse>
				<verse number="7">ಆಗ ಗಿದ್ಯೋನನು, “ಆಗ ಯೆಹೋವ ದೇವರು ಜೆಬಹನನ್ನೂ, ಚಲ್ಮುನ್ನನನ್ನೂ ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟ ತರುವಾಯ, ನಿಮ್ಮ ಮಾಂಸವನ್ನು ಮರುಭೂಮಿಯ ಮುಳ್ಳುಗಳಿಂದಲೂ, ಕಾರೆಗಿಡದ ಮುಳ್ಳುಗಳಿಂದಲೂ ಹೊಡಿಸುವೆನು,” ಎಂದನು.</verse>
				<verse number="8">ಅಲ್ಲಿಂದ ಪೆನೀಯೇಲಿಗೆ ಹೋಗಿ, ಆ ಊರಿನವರ ಸಂಗಡ ಆ ಪ್ರಕಾರವೇ ಮಾತನಾಡಿದನು. ಅವರು ಸುಕ್ಕೋತಿನ ಮನುಷ್ಯರು ಉತ್ತರ ಕೊಟ್ಟ ಹಾಗೆಯೇ ಉತ್ತರಕೊಟ್ಟರು.</verse>
				<verse number="9">ಆಗ ಅವನು ಪೆನೀಯೇಲಿನ ಮನುಷ್ಯರಿಗೆ ಸಹ, “ನಾನು ಸಮಾಧಾನವಾಗಿ ತಿರುಗಿ ಬರುವಾಗ, ಈ ಗೋಪುರವನ್ನು ಕೆಡವಿಬಿಡುವೆನು,” ಎಂದನು.</verse>
				<verse number="10">ಜೆಬಹನೂ, ಚಲ್ಮುನ್ನನೂ ತಮ್ಮ ಸೈನ್ಯದ ಹೆಚ್ಚು ಕಡಿಮೆ ಹದಿನೈದು ಸಾವಿರ ಜನರ ಸಂಗಡ ಕರ್ಕೋರಿನಲ್ಲಿ ಇದ್ದರು. ಇವರಷ್ಟೂ, ಖಡ್ಗ ಹಿಡಿಯತಕ್ಕ ಒಂದು ಲಕ್ಷದ ಇಪ್ಪತ್ತು ಸಾವಿರ ಜನ ಬಿದ್ದುಹೋದಾಗ, ಪೂರ್ವದೇಶದ ಸಮಸ್ತ ಜನರು ಅಲ್ಲಿ ಉಳಿದರು.</verse>
				<verse number="11">ಗಿದ್ಯೋನನು ನೋಬಹ, ಯೊಗ್ಬೆಹಾ ಇವುಗಳ ಪೂರ್ವದಲ್ಲಿದ್ದ ಡೇರೆಗಳಲ್ಲಿ ಸುರಕ್ಷಿತವಾಗಿ ವಾಸಿಸಿರುವವರ ಮಾರ್ಗವಾಗಿ ಹೋಗಿ ಅವರು ನಿರೀಕ್ಷಿಸದ ಸಮಯದಲ್ಲಿ ಅವರ ಮೇಲೆ ದಾಳಿಮಾಡಿದರು.</verse>
				<verse number="12">ಜೆಬಹನೂ, ಚಲ್ಮುನ್ನನೂ ಓಡಿ ಹೋದದ್ದರಿಂದ, ಅವನು ಮಿದ್ಯಾನ್ಯರ ಇಬ್ಬರು ಅರಸುಗಳಾದ ಜೆಬಹನನ್ನೂ, ಚೆಲ್ಮುನ್ನನನ್ನೂ ಹಿಂದಟ್ಟಿ ಹಿಡಿದು ಪಾಳೆಯನ್ನೆಲ್ಲಾ ಚದರಿಸಿಬಿಟ್ಟರು.</verse>
				<verse number="13">ಯೋವಾಷನ ಮಗನಾದ ಗಿದ್ಯೋನನು ಯುದ್ಧ ತೀರಿಸಿಕೊಂಡು ಹೆರೆಸ್ ಎಂಬ ಬೆಟ್ಟದ ಮಾರ್ಗವಾಗಿ ತಿರುಗಿಬಂದು,</verse>
				<verse number="14">ಸುಕ್ಕೋತಿನ ಮನುಷ್ಯರಲ್ಲಿ ಒಬ್ಬ ಯೌವನಸ್ಥನನ್ನು ಹಿಡಿದು ಅವನನ್ನು ಕೇಳಿದಾಗ ಅವನು, ಸುಕ್ಕೋತಿನ ಪ್ರಧಾನರೂ, ಹಿರಿಯರೂ ಆದ ಎಪ್ಪತ್ತೇಳು ಜನರ ಹೆಸರನ್ನು ಅವನು ಬರೆದನು.</verse>
				<verse number="15">ಗಿದ್ಯೋನನು ಸುಕ್ಕೋತಿನ ಮನುಷ್ಯರ ಬಳಿಗೆ ಬಂದು, “ಇಗೋ, ದಣಿದಿರುವ ನಿನ್ನ ಮನುಷ್ಯರಿಗೆ ನಾವು ರೊಟ್ಟಿಯನ್ನು ಕೊಡುವ ಹಾಗೆ, ಜೆಬಹ, ಚೆಲ್ಮುನ್ನರ ಕೈ ಈಗಲೇ ನಿನ್ನ ಕೈವಶವಾಗಿದೆಯೋ ಎಂದು ನೀವು ನನ್ನನ್ನು ನಿಂದಿಸಿದ ಜೆಬಹನನ್ನೂ, ಚಲ್ಮುನ್ನನನ್ನೂ ನೋಡಿರಿ,” ಎಂದು ಹೇಳಿ</verse>
				<verse number="16">ಪಟ್ಟಣದ ಹಿರಿಯರನ್ನು ಮತ್ತು ಸುಕ್ಕೋತಿನವರನ್ನು ಹಿಡಿದು, ಮರುಭೂಮಿಯ ಮುಳ್ಳು ಹಾಗು ಕಾರೆಗಿಡದ ಮುಳ್ಳುಗಳಿಂದ ದಂಡಿಸಿ ಅವರಿಗೆ ಪಾಠ ಕಲಿಸಿದನು.</verse>
				<verse number="17">ಪೆನೀಯೇಲಿನ ಗೋಪುರವನ್ನು ಕೆಡವಿ, ಆ ಪಟ್ಟಣದ ಮನುಷ್ಯರನ್ನು ಕೊಂದುಹಾಕಿದನು.</verse>
				<verse number="18">ಅವನು ಜೆಬಹನಿಗೂ, ಚಲ್ಮುನ್ನನಿಗೂ, “ನೀವು ತಾಬೋರಿನಲ್ಲಿ ಕೊಂದುಹಾಕಿದ ಆ ಮನುಷ್ಯರು ಯಾವ ತರಹದವರಾಗಿದ್ದರು?” ಎಂದನು. ಅದಕ್ಕವರು, “ನಿನ್ನ ಹಾಗೆಯೇ ಅವರು ಒಬ್ಬೊಬ್ಬರು ರೂಪದಲ್ಲಿ ಅರಸನ ಮಕ್ಕಳಂತಿದ್ದರು,” ಎಂದರು.</verse>
				<verse number="19">ಅದಕ್ಕವನು, “ಅವರು ನನ್ನ ತಾಯಿಯ ಮಕ್ಕಳು, ನನ್ನ ಸಹೋದರರು. ಯೆಹೋವ ದೇವರ ಜೀವದ ಆಣೆ ನೀವು ಅವರನ್ನು ಬದುಕಿಸಿದ್ದರೆ ನಿಮ್ಮನ್ನು ಕೊಲ್ಲುತ್ತಿರಲಿಲ್ಲ,” ಎಂದನು.</verse>
				<verse number="20">ತನ್ನ ಚೊಚ್ಚಲಮಗನಾದ ಎತೆರನಿಗೆ, “ನೀನೆದ್ದು ಅವರನ್ನು ಕೊಂದುಹಾಕು,” ಎಂದನು. ಆದರೆ ಆ ಯುವಕನು ತನ್ನ ಖಡ್ಗವನ್ನು ಬಿಚ್ಚದೆ ಹೋದನು. ಏಕೆಂದರೆ ಅವನು ಇನ್ನೂ ಹುಡುಗನಾದ್ದರಿಂದ ಭಯಪಟ್ಟನು.</verse>
				<verse number="21">ಆಗ ಜೆಬಹನೂ, ಚಲ್ಮುನ್ನನೂ, “ನೀನು ಎದ್ದು ನಮ್ಮ ಮೇಲೆ ಬೀಳು. ಏಕೆಂದರೆ ಮನುಷ್ಯನು ಹೇಗೋ ಹಾಗೆಯೇ ಅವನ ಬಲವು ಇರುವುದು,” ಎಂದರು. ಗಿದ್ಯೋನನು ಎದ್ದು ಜೆಬಹನನ್ನೂ, ಚೆಲ್ಮುನ್ನನನ್ನೂ ಕೊಂದುಹಾಕಿ, ಅವರ ಒಂಟೆಗಳ ಕುತ್ತಿಗೆಗಳಲ್ಲಿ ಇದ್ದ ಆಭರಣಗಳನ್ನು ತೆಗೆದುಕೊಂಡನು.</verse>
				<verse number="22">ಆಗ ಇಸ್ರಾಯೇಲ್ ಜನರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನರ ಕೈಯಿಂದ ತಪ್ಪಿಸಿ ರಕ್ಷಿಸಿದ್ದರಿಂದ, ನೀನೂ, ನಿನ್ನ ಪುತ್ರನೂ, ನಿನ್ನ ಪುತ್ರನ ಪುತ್ರನೂ ನಮ್ಮನ್ನು ಆಳಬೇಕು,” ಎಂದರು.</verse>
				<verse number="23">ಗಿದ್ಯೋನನು ಅವರಿಗೆ, “ನಾನು ನಿಮ್ಮನ್ನು ಆಳುವುದಿಲ್ಲ. ನನ್ನ ಮಗನೂ ನಿಮ್ಮನ್ನು ಆಳುವುದಿಲ್ಲ. ಯೆಹೋವ ದೇವರೇ ನಿಮ್ಮನ್ನು ಆಳುವರು.”</verse>
				<verse number="24">ಮತ್ತು ಗಿದ್ಯೋನನು ಅವರಿಗೆ, “ಒಂದು ಬಿನ್ನಹವನ್ನು ನಾನು ನಿಮಗೆ ಮಾಡುತ್ತೇನೆ. ಪ್ರತಿಯೊಬ್ಬನು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ನನಗೆ ಕೊಡಿರಿ,” ಎಂದನು. ಏಕೆಂದರೆ ಮಿದ್ಯಾನರು ಇಷ್ಮಾಯೇಲರಾಗಿದ್ದದರಿಂದ ಅವರು ಬಂಗಾರದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು.</verse>
				<verse number="25">ಅವರು, “ನಾವು ಇಷ್ಟಪೂರ್ವಕವಾಗಿ ಕೊಡುತ್ತೇವೆ,” ಎಂದು ಹೇಳಿ, ಒಂದು ವಸ್ತ್ರವನ್ನು ಹಾಸಿ, ಅಲ್ಲಿ ಅವರವರು ಕೊಳ್ಳೆಹೊಡೆದ ಬಂಗಾರದ ಓಲೆಗಳನ್ನು ಹಾಕಿದರು.</verse>
				<verse number="26">ಆಭರಣಗಳೂ, ಕಂಠಮಾಲೆಗಳೂ, ಮಿದ್ಯಾನರ ಅರಸರು ಹೊದ್ದುಕೊಂಡಿದ್ದ ರಕ್ತಾಂಬರ ವಸ್ತ್ರಗಳೂ, ಅವರ ಒಂಟೆಗಳ ಕೊರಳೊಳಗೆ ಇದ್ದ ಸರಪಣಿಗಳೂ ಹೊರತು ಅವನು ಕೇಳಿ ತೆಗೆದುಕೊಂಡ ಬಂಗಾರದ ಓಲೆಗಳ ತೂಕವು ಇಪ್ಪತ್ತು ಕಿಲೋಗ್ರಾಂ ತೂಕವಾಗಿತ್ತು.</verse>
				<verse number="27">ಆ ಬಂಗಾರದಿಂದ ಗಿದ್ಯೋನನು ಏಫೋದನ್ನು ಮಾಡಿಸಿ, ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು. ಆದರೆ ಇಸ್ರಾಯೇಲರೆಲ್ಲರೂ ಅದರ ಹಿಂದೆ ಹೋಗಿ ಪೂಜಿಸಿ ದೇವದ್ರೋಹಿಗಳಾದರು, ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು.</verse>
				<verse number="28">ಮಿದ್ಯಾನ್ಯರು ತಮ್ಮ ತಲೆಯನ್ನು ತಿರುಗಿ ಎತ್ತಕೂಡದ ಹಾಗೆ ಇಸ್ರಾಯೇಲರ ಮುಂದೆ ತಗ್ಗಿಹೋದರು. ದೇಶವು ಗಿದ್ಯೋನನ ದಿವಸಗಳಲ್ಲಿ ನಲವತ್ತು ವರುಷ ವಿಶ್ರಾಂತಿಯಲ್ಲಿತ್ತು.</verse>
				<verse number="29">ಯೋವಾಷನ ಮಗ ಯೆರುಬ್ಬಾಳನು ಹೋಗಿ ತನ್ನ ಸ್ವಂತ ಮನೆಯಲ್ಲಿ ವಾಸವಾಗಿದ್ದನು.</verse>
				<verse number="30">ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರಿದ್ದುದರಿಂದ ಅವನಿಂದ ಜನಿಸಿದ ಎಪ್ಪತ್ತು ಮಂದಿ ಮಕ್ಕಳು ಇದ್ದರು.</verse>
				<verse number="31">ಶೆಖೆಮಿನಲ್ಲಿದ್ದ ಅವನ ಉಪಪತ್ನಿಯು ಅವನಿಗೆ ಒಬ್ಬ ಮಗನನ್ನು ಹೆತ್ತಳು. ಅವನು ಆ ಮಗನಿಗೆ ಅಬೀಮೆಲೆಕನೆಂದು ಹೆಸರಿಟ್ಟನು.</verse>
				<verse number="32">ಯೋವಾಷನ ಮಗನಾದ ಗಿದ್ಯೋನನು ಒಳ್ಳೆಯ ವೃದ್ಧಾಪ್ಯದಲ್ಲಿ ಮರಣಹೊಂದಿದಾಗ, ಅವನನ್ನು ಅಬೀಯೆಜೆರೀಯರಿಗೆ ಸೇರಿದ ಒಫ್ರದಲ್ಲಿ ತನ್ನ ತಂದೆಯಾದ ಯೋವಾಷನ ಸಮಾಧಿಯಲ್ಲಿ ಹೂಳಿಡಲಾಯಿತು.</verse>
				<verse number="33">ಗಿದ್ಯೋನನ ಮರಣದ ತರುವಾಯ, ಇಸ್ರಾಯೇಲರು ದೇವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜೆ ಮಾಡುತ್ತಾ ಬಾಳ್ ಬೆರೀತನ್ನು ತಮಗೆ ದೇವರಾಗಿ ಮಾಡಿಕೊಂಡರು.</verse>
				<verse number="34">ಸುತ್ತಲೂ ಇದ್ದ ತಮ್ಮ ಎಲ್ಲಾ ಶತ್ರುಗಳ ಕೈಯಿಂದ ತಮ್ಮನ್ನು ತಪ್ಪಿಸಿಬಿಟ್ಟ ತಮ್ಮ ದೇವರಾದ ಯೆಹೋವ ದೇವರನ್ನು ಮರೆತುಬಿಟ್ಟರು.</verse>
				<verse number="35">ಗಿದ್ಯೋನನೆಂಬ ಯೆರುಬ್ಬಾಳನು ಇಸ್ರಾಯೇಲಿಗೆ ಮಾಡಿದ ಸಕಲ ಉಪಕಾರಗಳಿಗೆ ತಕ್ಕ ಹಾಗೆ ದಯೆಯನ್ನು ಅವನ ಮನೆಗೆ ಮಾಡದೆ ಹೋದರು.</verse>
			</chapter>
			<chapter number="9">
				<verse number="1">ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆಮಿನಲ್ಲಿರುವ ತನ್ನ ತಾಯಿಯ ಸಹೋದರರ ಬಳಿಗೆ ಹೋಗಿ, ಅವರ ಸಂಗಡ ಮತ್ತು ತನ್ನ ತಾಯಿಯ ತಂದೆ ಮನೆಯ ಕುಟುಂಬದವರೆಲ್ಲರ ಸಂಗಡ ಮಾತನಾಡಿ,</verse>
				<verse number="2">“ನೀವು ದಯಮಾಡಿ ಶೆಕೆಮಿನ ಹಿರಿಯರಿಗೆ, ‘ಯೆರುಬ್ಬಾಳನ ಮಕ್ಕಳಾದ ಎಪ್ಪತ್ತು ಮಂದಿಯು ನಿಮ್ಮನ್ನು ಆಳುವುದು ಒಳ್ಳೆಯದೋ? ಒಬ್ಬನು ಆಳುವುದು ಒಳ್ಳೆಯದೋ?’ ಎಂದು ವಿಚಾರಿಸಿರಿ. ನಾನು ನಿಮ್ಮ ಎಲುಬೂ, ನಿಮ್ಮ ಮಾಂಸವೂ ಆಗಿದ್ದೇನೆಂದು ಜ್ಞಾಪಕಮಾಡಿಕೊಳ್ಳಿರಿ,” ಎಂದನು.</verse>
				<verse number="3">ಹಾಗೆಯೇ ಅವನ ತಾಯಿಯ ಸಹೋದರರು ಅವನನ್ನು ಕುರಿತು ಶೆಕೆಮಿನ ಹಿರಿಯರೆಲ್ಲರೂ ಕೇಳುವಂತೆ ಈ ಮಾತುಗಳನ್ನೆಲ್ಲಾ ಹೇಳಿದರು. ಅವರು, “ಇವನು ನಮ್ಮ ಸಹೋದರನು,” ಎಂದು ಹೇಳಿದ್ದರಿಂದ, ಆ ಜನರ ಹೃದಯವು ಅಬೀಮೆಲೆಕನ ಕಡೆಗೆ ತಿರುಗಿತು.</verse>
				<verse number="4">ಅವರು ಬಾಳ್ ಬೆರೀತಿನ ಮನೆಯೊಳಗಿಂದ ಎಪ್ಪತ್ತು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅವನಿಗೆ ಕೊಟ್ಟರು. ಅವುಗಳಿಂದ ಅಬೀಮೆಲೆಕನು ಪುಂಡಪೋಕರಿಗಳನ್ನು ಸಂಬಳಕ್ಕೆ ಇಟ್ಟುಕೊಂಡನು. ಅವರು ಅವನ ಹಿಂದೆ ಹೋದರು.</verse>
				<verse number="5">ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ, ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಪುತ್ರರನ್ನು ಒಂದು ಬಂಡೆಯ ಮೇಲೆ ಕೊಂದುಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗ ಯೋತಾಮನು ಒಬ್ಬನೇ ಉಳಿದನು. ಏಕೆಂದರೆ ಅವನು ಅಡಗಿಕೊಂಡನು.</verse>
				<verse number="6">ಶೆಕೆಮಿನ ಜನರೆಲ್ಲರೂ, ಮಿಲ್ಲೋನಿನ ಮನೆಯವರೆಲ್ಲರೂ ಕೂಡಿಕೊಂಡು ಹೋಗಿ, ಶೆಕೆಮಿನ ಬಯಲಲ್ಲಿ ಇರುವ ಸ್ತಂಭದ ಬಳಿ ಇರುವ ಅಲ್ಲೋನ್ ಮರದ ಹತ್ತಿರ ಸೇರಿ ಅಬೀಮೆಲೆಕನನ್ನು ಅರಸನನ್ನಾಗಿ ನೇಮಿಸಿದರು.</verse>
				<verse number="7">ಯೋತಾಮನಿಗೆ ಇದನ್ನು ತಿಳಿಸಿದಾಗ, ಅವನು ಹೋಗಿ ಗೆರಿಜೀಮ್ ಬೆಟ್ಟದ ತುದಿಯಲ್ಲಿ ಏರಿ ನಿಂತು, ತನ್ನ ಸ್ವರವನ್ನೆತ್ತಿ ಕೂಗಿ ಅವರಿಗೆ, “ಶೆಕೆಮಿನ ಹಿರಿಯರೇ, ದೇವರು ನಿಮ್ಮನ್ನು ಕೇಳುವ ಹಾಗೆ ನನ್ನ ಮಾತನ್ನು ಕೇಳಿರಿ.</verse>
				<verse number="8">ಮರಗಳು ತಮ್ಮ ಮೇಲೆ ಒಬ್ಬ ಅರಸನನ್ನು ಅಭಿಷೇಕಿಸಿಕೊಳ್ಳುವುದಕ್ಕಾಗಿ ಹೊರಟುಹೋಗಿ, ಹಿಪ್ಪೆಯ ಮರಕ್ಕೆ, ‘ನೀನು ನಮ್ಮನ್ನು ಆಳು,’ ಎಂದವು.</verse>
				<verse number="9">“ಹಿಪ್ಪೆಯ ಮರ ಅವುಗಳಿಗೆ, ‘ಯಾವುದರಿಂದ ದೇವರನ್ನೂ, ಮನುಷ್ಯನನ್ನೂ ಘನಪಡಿಸುತ್ತಾರೋ, ಈ ನನ್ನ ಎಣ್ಣೆಯನ್ನು ಬಿಟ್ಟು, ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ?’ ಎಂದಿತು.</verse>
				<verse number="10">“ಮರಗಳು ಅಂಜೂರದ ಗಿಡಕ್ಕೆ, ‘ನೀನು ಬಂದು ನಮ್ಮ ಮೇಲೆ ಆಳಬೇಕು,’ ಎಂದವು.</verse>
				<verse number="11">“ಆದರೆ ಅಂಜೂರದ ಗಿಡಗಳು ಅವುಗಳಿಗೆ, ‘ನಾನು ನನ್ನ ಮಧುರವನ್ನೂ, ನನ್ನ ಒಳ್ಳೆಯ ಫಲವನ್ನೂ ಬಿಟ್ಟು ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ?’ ಎಂದಿತು.</verse>
				<verse number="12">“ಮರಗಳು ದ್ರಾಕ್ಷಿ ಗಿಡಕ್ಕೆ, ‘ನೀನು ಬಂದು ನಮ್ಮನ್ನು ಆಳು,’ ಎಂದವು.</verse>
				<verse number="13">“ಆದರೆ ದ್ರಾಕ್ಷಿ ಗಿಡವು ಅವುಗಳಿಗೆ, ‘ದೇವರನ್ನೂ, ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು, ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ?’ ಎಂದಿತು.</verse>
				<verse number="14">“ಆಗ ಎಲ್ಲಾ ಮರಗಳು ಮುಳ್ಳಿನ ಗಿಡಕ್ಕೆ, ‘ನೀನು ಬಂದು ನಮ್ಮನ್ನು ಆಳು,’ ಎಂದವು.</verse>
				<verse number="15">“ಮುಳ್ಳಿನ ಗಿಡವು ಮರಗಳಿಗೆ, ‘ನೀವು ನನ್ನನ್ನು ಅರಸನನ್ನಾಗಿ ಅಭಿಷೇಕ ಮಾಡುವುದು ಸತ್ಯವಾದರೆ, ನನ್ನ ನೆರಳಲ್ಲಿ ಬಂದು ಆಶ್ರಯಿಸಿಕೊಳ್ಳಿರಿ; ಇಲ್ಲದಿದ್ದರೆ ಮುಳ್ಳಿನ ಗಿಡದಿಂದ ಬೆಂಕಿ ಹೊರಟು, ಲೆಬನೋನಿನ ದೇವದಾರುಗಳು ದಹಿಸಿಬಿಡಲಿ,’ ಎಂದಿತು.</verse>
				<verse number="16">“ನೀವು ಈಗ ಅಬೀಮೆಲೆಕನನ್ನು ಅರಸನಾಗಿ ಮಾಡಿದ್ದು ಸತ್ಯದಲ್ಲಿಯೂ, ಯಥಾರ್ಥದಿಂದಲೂ ಮಾಡಿರುವುದಾದರೆ ಮತ್ತು ಯೆರುಬ್ಬಾಳನಿಗೂ, ಅವನ ಮನೆಗೂ ಒಳ್ಳೆಯದನ್ನು ಮಾಡಿದ್ದರೆ,</verse>
				<verse number="17">ನನ್ನ ತಂದೆಯಾದ ಅವನು ನಿಮಗೋಸ್ಕರ ಯುದ್ಧಮಾಡಿದವನಾಗಿಯೂ, ತನ್ನ ಪ್ರಾಣವನ್ನು ಲೆಕ್ಕಿಸದೆ, ಮಿದ್ಯಾನಿನ ಕೈಯಿಂದ ನಿಮ್ಮನ್ನು ತಪ್ಪಿಸಿದವನಾಗಿಯೂ ಇರಲಾಗಿ,</verse>
				<verse number="18">ನೀವು ಈ ಹೊತ್ತು ನನ್ನ ತಂದೆಯ ಮನೆಗೆ ವಿರೋಧವಾಗಿ ಎದ್ದು, ಅವನ ಎಪ್ಪತ್ತು ಮಕ್ಕಳನ್ನು ಒಂದೇ ಬಂಡೆ ಮೇಲೆ ಕೊಂದು, ಅವನ ದಾಸಿಯ ಮಗನಾದ ಅಬೀಮೆಲೆಕನನ್ನು, ಅವನು ನಿಮ್ಮ ಸಹೋದರನಾಗಿರುವುದರಿಂದ ಶೆಕೆಮಿನ ಜನರ ಮೇಲೆ ಅರಸನಾಗಿ ಇಟ್ಟದ್ದು,</verse>
				<verse number="19">ಯೆರುಬ್ಬಾಳನ ಯೋಗ್ಯತೆಗೆ ತಕ್ಕದ್ದಾಗಿದ್ದರೆ ಮತ್ತು ಈ ಹೊತ್ತು ಅವನಿಗೂ, ಅವನ ಮಗನಿಗೂ ನೀವು ಸತ್ಯದಲ್ಲಿಯೂ, ಯಥಾರ್ಥತೆಯಲ್ಲಿಯೂ ಕಾರ್ಯ ಮಾಡಿದ್ದರೆ, ಅಬೀಮೆಲೆಕನಲ್ಲಿ ನೀವು ಸಂತೋಷಪಡಿರಿ. ಅವನು ಸಹ ನಿಮ್ಮಲ್ಲಿ ಸಂತೋಷಪಡಲಿ.</verse>
				<verse number="20">ಇಲ್ಲದಿದ್ದರೆ ಅಬೀಮೆಲೆಕನಿಂದ ಬೆಂಕಿ ಹೊರಟು ಶೆಕೆಮಿನ ಹಿರಿಯರನ್ನೂ, ಮಿಲ್ಲೋನಿನ ಮನೆಯವರನ್ನೂ ದಹಿಸಿಬಿಡಲಿ. ಶೆಕೆಮಿನ ಜನರಿಂದಲೂ, ಮಿಲ್ಲೋನಿನ ಮನೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ದಹಿಸಿಬಿಡಲಿ,” ಎಂದನು.</verse>
				<verse number="21">ಆಗ ಯೋತಾಮನು ತಪ್ಪಿಸಿಕೊಂಡು ಓಡಿ ಬೇರಕ್ಕೆ ಹೋಗಿ, ತನ್ನ ಸಹೋದರನಾದ ಅಬೀಮೆಲೆಕನ ಭಯದ ನಿಮಿತ್ತವಾಗಿ ಅಲ್ಲಿ ವಾಸವಾಗಿದ್ದನು.</verse>
				<verse number="22">ಅಬೀಮೆಲೆಕನು ಇಸ್ರಾಯೇಲನ್ನು ಮೂರು ವರ್ಷ ಆಳಿದ ತರುವಾಯ,</verse>
				<verse number="23">ದೇವರು ಅಬೀಮೆಲೆಕ ಮತ್ತು ಶೆಕೆಮಿನ ಹಿರಿಯರ ನಡುವೆ ಒಂದು ದುರಾತ್ಮನನ್ನು ಕಳುಹಿಸಿದರು. ಆಗ ಶೆಕೆಮಿನವರು ಅಬೀಮೆಲೆಕನಿಗೆ ದ್ರೋಹಮಾಡಿದರು.</verse>
				<verse number="24">ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ, ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಅವನ ಸಹೋದರರನ್ನು ಕೊಲ್ಲುವುದಕ್ಕೆ ಅವನ ಕೈಗಳನ್ನು ಬಲಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ, ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹಮಾಡಿದರು.</verse>
				<verse number="25">ಶೆಕೆಮಿನ ಹಿರಿಯರು ಪರ್ವತ ಶಿಖರಗಳ ಮೇಲೆ ಅವನಿಗೋಸ್ಕರ ಹೊಂಚುಗಾರರನ್ನು ಇಟ್ಟು, ತಮ್ಮ ಸಮೀಪವಾಗಿ ಮಾರ್ಗದಲ್ಲಿ ಹಾದುಹೋಗುವ ಎಲ್ಲರನ್ನು ಸುಲಿದುಕೊಂಡರು. ಈ ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು.</verse>
				<verse number="26">ಆಗ ಏಬೆದನ ಮಗನಾದ ಗಾಳನೂ, ಅವನ ಸಹೋದರರೂ ಶೆಕೆಮಿಗೆ ದಾಟಿ ಬಂದರು. ಆದರೆ ಶೆಕೆಮಿನ ಹಿರಿಯರು ಅವನಲ್ಲಿ ಭರವಸೆಯಿಟ್ಟು,</verse>
				<verse number="27">ಹೊರಗೆ ಹೋಗಿ ತಮ್ಮ ದ್ರಾಕ್ಷಿ ಫಲಗಳನ್ನು ಕೊಯ್ದು, ಅವುಗಳನ್ನು ತುಳಿದು ಸಂತೋಷಪಟ್ಟು, ತಮ್ಮ ದೇವರ ಮನೆಯೊಳಗೆ ಹೋಗಿ, ತಿಂದು ಕುಡಿದು ಅಬೀಮೆಲೆಕನನ್ನು ಶಪಿಸಿದರು.</verse>
				<verse number="28">ಆಗ ಏಬೆದನ ಮಗನಾದ ಗಾಳನು, “ನಾವು ಅವನನ್ನು ಸೇವಿಸುವ ಹಾಗೆ ಅಬೀಮೆಲೆಕನು ಯಾರು? ಶೆಕೆಮನು ಯಾರು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪ್ರಧಾನನು ಜೆಬೂಲನಲ್ಲವೋ? ಶೆಕೆಮಿನ ತಂದೆಯಾದ ಹಮೋರನ ಮನುಷ್ಯರನ್ನೇ ಸೇವಿಸಿರಿ. ಇವನನ್ನು ನಾವು ಏಕೆ ಸೇವಿಸಬೇಕು?</verse>
				<verse number="29">ಈ ಜನರನ್ನು ದೇವರು ನನ್ನ ಕೈಗೆ ಒಪ್ಪಿಸಿದರೆ ಚೆನ್ನಾಗಿತ್ತು, ಆಗ ನಾನು ಅಬೀಮೆಲೆಕನನ್ನು ತೆಗೆದುಹಾಕುತ್ತಿದ್ದೆನು. ತರುವಾಯ ಅಬೀಮೆಲೆಕನಿಗೆ, ‘ನೀನು ನಿನ್ನ ಸೈನ್ಯವನ್ನು ಹೆಚ್ಚಿಸಿಕೊಂಡು ಹೊರಟು ಬಾ,’ ಎಂದು ಹೇಳುತ್ತಿದ್ದೆನು,” ಎಂದನು.</verse>
				<verse number="30">ಆ ಪಟ್ಟಣದ ಅಧಿಪತಿಯಾದ ಜೆಬೂಲನು, ಏಬೆದನ ಮಗ ಗಾಳನು ಹೇಳಿದ ಮಾತುಗಳನ್ನು ಕೇಳಿದಾಗ ಕೋಪಗೊಂಡು,</verse>
				<verse number="31">ಅವನು ಅಬೀಮೆಲೆಕನ ಬಳಿಗೆ ರಹಸ್ಯವಾಗಿ ದೂತರನ್ನು ಕಳುಹಿಸಿ, “ಏಬೆದನ ಮಗ ಗಾಳನೂ, ಅವನ ಸಹೋದರರೂ ಶೆಕೆಮಿಗೆ ಬಂದಿದ್ದಾರೆ. ಅವರು ಪಟ್ಟಣವನ್ನು ನಿನಗೆ ವಿರೋಧವಾಗಿ ಬಲಪಡಿಸುತ್ತಿದ್ದಾರೆ.</verse>
				<verse number="32">ಆದ್ದರಿಂದ ಈಗ ನೀನೂ, ನಿನ್ನ ಸಂಗಡ ಇರುವ ಜನರೂ ಕೂಡಿ, ರಾತ್ರಿಯಲ್ಲಿ ಎದ್ದು, ಹೊಲದಲ್ಲಿ ಹೊಂಚುಹಾಕಿಕೊಂಡಿರಬೇಕು.</verse>
				<verse number="33">ಹೊತ್ತಾರೆ ಸೂರ್ಯನು ಉದಯಿಸುವಾಗ, ನೀನು ಎದ್ದು ಪಟ್ಟಣದ ಮೇಲೆ ಬೀಳಬೇಕು. ಗಾಳನೂ, ಅವನ ಸಂಗಡ ಇರುವ ಜನರೂ ನಿಮಗೆದುರಾಗಿ ಹೊರಟು ಬರುವಾಗ, ನೀನು ನಿನ್ನ ಕೈಗೆ ಸರಿಬಂದ ಹಾಗೆ ಅವನಿಗೆ ಮಾಡಬೇಕು,” ಎಂದು ಹೇಳಿದನು.</verse>
				<verse number="34">ಹಾಗೆಯೇ ಅಬೀಮೆಲೆಕನೂ, ಅವನ ಸಂಗಡ ಇದ್ದ ಸಮಸ್ತ ಜನರೂ ರಾತ್ರಿಯಲ್ಲಿ ಎದ್ದು, ಶೆಕೆಮಿಗೆ ವಿರೋಧವಾಗಿ ನಾಲ್ಕು ಗುಂಪಾಗಿ ಹೊಂಚಿಕಾಯುತ್ತಿದ್ದರು.</verse>
				<verse number="35">ಏಬೆದನ ಮಗ ಗಾಳನು ಹೊರಟುಬಂದು ಪಟ್ಟಣದ ಬಾಗಿಲಿನ ದ್ವಾರದಲ್ಲಿ ನಿಂತನು. ಆಗ ಹೊಂಚುಹಾಕೊಕೊಂಡಿದ್ದ ಅಬೀಮೆಲೆಕನೂ, ಅವನ ಸಂಗಡ ಇದ್ದ ಜನರೂ ಎದ್ದು ಬಂದರು.</verse>
				<verse number="36">ಗಾಳನು ಆ ಜನರನ್ನು ಕಂಡಾಗ, “ಬೆಟ್ಟದ ಶಿಖರಗಳಿಂದ ಜನರು ಬರುತ್ತಾರೆ,” ಎಂದು ಜೆಬೂಲನಿಗೆ ಹೇಳಿದರು. ಜೆಬೂಲನು ಅವನಿಗೆ, “ನೀನು ಬೆಟ್ಟಗಳ ನೆರಳನ್ನು ಮನುಷ್ಯರಂತೆ ಕಾಣುತ್ತೀ,” ಎಂದನು.</verse>
				<verse number="37">ಗಾಳನು ತಿರುಗಿ ಅವನ ಸಂಗಡ ಮಾತನಾಡಿ, “ಇಗೋ, ಜನರು ಭೂಮಧ್ಯ ಸ್ಥಳದಿಂದ ಇಳಿದು ಬರುತ್ತಾರೆ. ಕಣಿಹೇಳುವವರ ಮರದ ಮಾರ್ಗವಾಗಿ ಇನ್ನೊಂದು ಗುಂಪು ಬರುತ್ತಿದೆ,” ಎಂದನು.</verse>
				<verse number="38">ಆಗ ಜೆಬೂಲನು ಅವನಿಗೆ, “ನಾವು ಅವನನ್ನು ಸೇವಿಸುವ ಹಾಗೆ ಅಬೀಮೆಲೆಕನು ಯಾರು, ಎಂದು ನೀನು ಹೇಳಿದ ನಿನ್ನ ಬಾಯಿ ಈಗ ಎಲ್ಲಿ? ಅದು ನೀನು ಅಲಕ್ಷ್ಯಮಾಡಿದ ಜನರಲ್ಲವೋ? ಈಗ ನೀನು ಹೊರಟು ಅವರ ಸಂಗಡ ಯುದ್ಧ ಮಾಡು,” ಎಂದನು.</verse>
				<verse number="39">ಗಾಳನು ಶೆಕೆಮಿನವರ ನಾಯಕನಾಗಿ ಹೊರಟು, ಅಬೀಮೆಲೆಕನ ಸಂಗಡ ಯುದ್ಧಮಾಡಿದನು.</verse>
				<verse number="40">ಆದರೆ ಅಬೀಮೆಲೆಕನು ಅವನನ್ನು ಹಿಂದಟ್ಟಿದಾಗ, ಗಾಳನು ಅವನ ಮುಂದೆ ಓಡಿಹೋದನು. ಬಾಗಿಲ ಹತ್ತಿರದವರೆಗೆ ಅನೇಕರು ಸಂಹಾರವಾಗಿ, ಅನೇಕರು ಗಾಯಗೊಂಡರು.</verse>
				<verse number="41">ಆಗ ಅಬೀಮೆಲೆಕನು ಅರೂಮದಲ್ಲಿ ವಾಸಮಾಡಿದನು. ಆದರೆ ಜೆಬೂಲನು ಗಾಳನನ್ನೂ, ಅವನ ಸಹೋದರರನ್ನೂ ಶೆಕೆಮಿನಲ್ಲಿ ಇರದ ಹಾಗೆ ಹೊರಡಿಸಿಬಿಟ್ಟನು.</verse>
				<verse number="42">ಮಾರನೆಯ ದಿನ ಶೆಕೆಮಿನ ಜನರು ಹೊಲಕ್ಕೆ ಹೊರಟರು. ಸೈನಿಕರು ಅದನ್ನು ಅಬೀಮೆಲೆಕನಿಗೆ ತಿಳಿಸಿದರು.</verse>
				<verse number="43">ಅವನು ಸೈನಿಕರನ್ನು ತೆಗೆದುಕೊಂಡು, ಅವರನ್ನು ಮೂರು ಗುಂಪುಗಳಾಗಿ ಮಾಡಿ, ಹೊಲದಲ್ಲಿ ಹೊಂಚಿಹಾಕಿಕೊಂಡನು. ಆಗ ಜನರು ಪಟ್ಟಣದಿಂದ ಹೊರಗೆ ಬಂದರು. ಅವನು ಅವರ ಮೇಲೆ ಎದ್ದು ಬಂದು, ಅವರನ್ನು ಹೊಡೆದನು.</verse>
				<verse number="44">ಅಬೀಮೆಲೆಕನೂ, ಅವನ ಸಂಗಡ ಇದ್ದ ಸೈನಿಕರ ಗುಂಪೂ ಮುಂದಕ್ಕೆ ಓಡಿ, ಪಟ್ಟಣದ ಬಾಗಿಲಿನ ಬಳಿ ನಿಂತರು. ಮಿಕ್ಕಾದ ಎರಡು ಗುಂಪಿನ ಜನರು, ಹೊಲದಲ್ಲಿರುವವರೆಲ್ಲರ ಮೇಲೆ ಬಿದ್ದು ಅವರನ್ನು ಹತಮಾಡಿದರು.</verse>
				<verse number="45">ಅಬೀಮೆಲೆಕನು ಆ ದಿನವೆಲ್ಲಾ ಪಟ್ಟಣದ ಮೇಲೆ ಯುದ್ಧಮಾಡಿ, ಪಟ್ಟಣವನ್ನು ಹಿಡಿದು, ಅದರಲ್ಲಿದ್ದ ಜನರನ್ನು ಕೊಂದು, ಪಟ್ಟಣವನ್ನು ಕೆಡವಿಬಿಟ್ಟು, ಅದರಲ್ಲಿ ಉಪ್ಪು ಎರಚಿಬಿಟ್ಟನು.</verse>
				<verse number="46">ಅದನ್ನು ಶೆಕೆಮಿನ ಗೋಪುರದಲ್ಲಿ ಜನರೆಲ್ಲರೂ ಕೇಳಿದಾಗ, ಅವರು ಬೆರೀತೆಂಬ ದೇವರ ಮನೆಯ ಭದ್ರವಾದ ಸ್ಥಳದಲ್ಲಿ ಅಡಗಿಕೊಂಡರು.</verse>
				<verse number="47">ಆದರೆ ಶೆಕೆಮಿನ ಗೋಪುರದಲ್ಲಿದ್ದ ಜನರೆಲ್ಲರೂ ಅಲ್ಲಿ ಕೂಡಿದ್ದಾರೆಂದು ಅಬೀಮೆಲೆಕನಿಗೆ ಗೊತ್ತಾದಾಗ,</verse>
				<verse number="48">ಅಬೀಮೆಲೆಕನು ತನ್ನ ಸಂಗಡ ಇದ್ದ ಸೈನಿಕರೆಲ್ಲರ ಸಹಿತವಾಗಿ ಚಲ್ಮೋನ್ ಬೆಟ್ಟವನ್ನೇರಿ, ತನ್ನ ಕೈಯಲ್ಲಿ ಕೊಡಲಿಯನ್ನು ಹಿಡಿದು, ಒಂದು ಮರದ ಕೊಂಬೆಯನ್ನು ಕಡಿದು, ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು, ತನ್ನ ಕೂಡ ಇದ್ದ ಜನರಿಗೆ, “ನಾನು ಮಾಡಿದ್ದನ್ನು ನೋಡಿ ಹಾಗೆಯೇ ತೀವ್ರವಾಗಿ ಮಾಡಿರಿ,” ಎಂದನು.</verse>
				<verse number="49">ಸೈನಿಕರೆಲ್ಲರಲ್ಲಿ ಒಬ್ಬೊಬ್ಬನು ಒಂದೊಂದು ಕೊಂಬೆಯನ್ನು ಕಡಿದು, ಅಬೀಮೆಲೆಕನ ಹಿಂದೆ ಹೋಗಿ, ಅವುಗಳನ್ನು ಆ ಭದ್ರವಾದ ಸ್ಥಳಕ್ಕೆ ಹಾಕಿ, ಅದಕ್ಕೆ ಬೆಂಕಿಯನ್ನು ಹಚ್ಚಿದರು. ಆಗ ಶೆಕೆಮಿನ ಗೋಪುರದಲ್ಲಿರುವವರೆಲ್ಲರೂ ಹೆಚ್ಚು ಕಡಿಮೆ ಸಾವಿರ ಜನರು ಸತ್ತುಹೋದರು. ಅವರು ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು.</verse>
				<verse number="50">ಆಗ ಅಬೀಮೆಲೆಕನು ತೆಬೇಚಿಗೆ ಹೋಗಿ, ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಿ, ಅದನ್ನು ಹಿಡಿದನು.</verse>
				<verse number="51">ಆದರೆ ಪಟ್ಟಣದ ಒಳಗೆ ಬಲವಾದ ಗೋಪುರ ಇತ್ತು. ಆ ಪಟ್ಟಣದಲ್ಲಿರುವ ಸಮಸ್ತ ಸ್ತ್ರೀ ಪುರುಷರು ಅಲ್ಲಿಗೆ ಓಡಿಹೋಗಿ, ಅದರಲ್ಲಿ ಹೊಕ್ಕು, ತಮ್ಮ ಹಿಂದಿನಿಂದ ಬಾಗಿಲನ್ನು ಮುಚ್ಚಿ ಗೋಪುರದ ಮೇಲೆ ಏರಿದರು.</verse>
				<verse number="52">ಆಗ ಅಬೀಮೆಲೆಕನು ಆ ಗೋಪುರಕ್ಕೆ ಬಂದು, ಅದರ ವಿರುದ್ಧ ಯುದ್ಧಮಾಡಿ, ಗೋಪುರದ ಬಾಗಿಲನ್ನು ಸುಟ್ಟು ಬಿಡುವುದಕ್ಕೆ ಅದರ ಬಳಿಗೆ ಬಂದನು.</verse>
				<verse number="53">ಆದರೆ ಒಬ್ಬ ಸ್ತ್ರೀಯು ಒಂದು ಬೀಸುವ ಕಲ್ಲಿನ ತುಂಡನ್ನು ಅಬೀಮೆಲೆಕನ ತಲೆಯ ಮೇಲೆ ಹಾಕಿದಳು. ಅದರಿಂದ ಅವನ ತಲೆಯನ್ನು ಒಡೆದು ಹಾಕಿದಳು.</verse>
				<verse number="54">ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕನನ್ನು ಕರೆದು ಅವನಿಗೆ, “ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಖಡ್ಗದಿಂದ ಇರಿದು, ನನ್ನನ್ನು ಕೊಲ್ಲು,” ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು. ಅವನು ಮರಣಹೊಂದಿದನು.</verse>
				<verse number="55">ಅಬೀಮೆಲೆಕನು ಮರಣಹೊಂದಿದ್ದನ್ನು ಇಸ್ರಾಯೇಲರು ಕಂಡಾಗ, ಅವರು ತಮ್ಮ ತಮ್ಮ ಮನೆಗಳಿಗೆ ಹೋದರು.</verse>
				<verse number="56">ಈ ಪ್ರಕಾರ ಅಬೀಮೆಲೆಕನು ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿದ್ದರಿಂದ, ತನ್ನ ತಂದೆಗೆ ಮಾಡಿದ ಕೇಡನ್ನು ದೇವರು ಅವನ ಮೇಲೆ ತಿರುಗಿ ಬರಮಾಡಿದರು.</verse>
				<verse number="57">ಇದಲ್ಲದೆ ಶೆಕೆಮಿನವರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದರು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂದಿತು.</verse>
			</chapter>
			<chapter number="10">
				<verse number="1">ಅಬೀಮೆಲೆಕನ ತರುವಾಯ ಇಸ್ಸಾಕಾರನ ಕುಲದ ದೋದೋವಿನ ಮಗನಾದ ಪೂವನ ಮಗನಾದ ತೋಲನು ಇಸ್ರಾಯೇಲರನ್ನು ರಕ್ಷಿಸುವುದಕ್ಕೆ ಎದ್ದನು. ಅವನು ಎಫ್ರಾಯೀಮ್ ಬೆಟ್ಟದ ಸೀಮೆಯ ಶಾಮೀರೆಂಬ ಊರಲ್ಲಿ ವಾಸಮಾಡಿದನು.</verse>
				<verse number="2">ಇಸ್ರಾಯೇಲಿಗೆ ಇಪ್ಪತ್ಮೂರು ವರುಷ ನ್ಯಾಯ ತೀರಿಸಿದ ತರುವಾಯ, ಅವನು ಮರಣಹೊಂದಿ ಶಾಮೀರಲ್ಲಿ ಸಮಾಧಿಯಾದನು.</verse>
				<verse number="3">ಅವನ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಾಯೇಲರನ್ನು ಇಪ್ಪತ್ತೆರಡು ವರುಷ ನ್ಯಾಯತೀರಿಸಿದನು.</verse>
				<verse number="4">ಅವನಿಗೆ ಮೂವತ್ತು ಕತ್ತೆಗಳ ಮೇಲೆ ಸವಾರಿ ಮಾಡುವ ಮೂವತ್ತು ಮಂದಿ ಪುತ್ರರು ಇದ್ದರು. ಗಿಲ್ಯಾದ್ ದೇಶದಲ್ಲಿ ಮೂವತ್ತು ಪಟ್ಟಣಗಳು ಅವರ ಅಧಿಕಾರದಲ್ಲಿದ್ದವು. ಅವುಗಳಿಗೆ ಈ ದಿನದವರೆಗೂ ಹವೋತ್ ಯಾಯೀರ್ ಎಂಬ ಹೆಸರಿದೆ.</verse>
				<verse number="5">ಯಾಯೀರನು ಮರಣಹೊಂದಿ, ಕಾಮೋನಿನಲ್ಲಿ ಸಮಾಧಿಯಾದನು.</verse>
				<verse number="6">ಇಸ್ರಾಯೇಲರು ಪುನಃ ಯೆಹೋವ ದೇವರ ಮುಂದೆ ಕೆಟ್ಟತನವನ್ನು ಮಾಡಿ, ಬಾಳನನ್ನೂ, ಅಷ್ಟೋರೆತನ್ನೂ, ಅರಾಮ್ ದೇಶದ ದೇವರುಗಳನ್ನೂ, ಸೀದೋನಿನ ದೇವರುಗಳನ್ನೂ, ಮೋವಾಬಿನ ದೇವರುಗಳನ್ನೂ, ಅಮ್ಮೋನಿಯರ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸಿದರು.</verse>
				<verse number="7">ಅವರು ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ಯೆಹೋವ ದೇವರು ಇಸ್ರಾಯೇಲ್ಯರ ಮೇಲೆ ಕೋಪವುಳ್ಳವರಾಗಿ ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಮಾರಿಬಿಟ್ಟರು.</verse>
				<verse number="8">ಇವರು ಆ ವರ್ಷ ಮೊದಲುಗೊಂಡು ಹದಿನೆಂಟು ವರ್ಷ ಯೊರ್ದನಿಗೆ ಆಚೆ ಗಿಲ್ಯಾದಿನಲ್ಲಿ ಅಮೋರಿಯರ ದೇಶದಲ್ಲಿರುವ ಇಸ್ರಾಯೇಲರನ್ನೆಲ್ಲಾ ಬಾಧಿಸಿ ಕುಂದಿಸಿದರು.</verse>
				<verse number="9">ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದ ಹಾಗೂ ಬೆನ್ಯಾಮೀನರಿಗೆ ವಿರೋಧವಾಗಿಯೂ, ಎಫ್ರಾಯೀಮರ ಮನೆಗೆ ವಿರೋಧವಾಗಿಯೂ ಯುದ್ಧಮಾಡುವುದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹು ಸಂಕಟವಾಯಿತು.</verse>
				<verse number="10">ಆಗ ಇಸ್ರಾಯೇಲರು ಯೆಹೋವ ದೇವರಿಗೆ ಕೂಗಿ, “ನಮ್ಮ ದೇವರನ್ನು ಬಿಟ್ಟು, ಬಾಳನನ್ನು ಸೇವಿಸಿದ್ದರಿಂದ, ನಾವು ನಿಮಗೆ ವಿರೋಧವಾಗಿ ಪಾಪಮಾಡಿದೆವು,” ಎಂದರು.</verse>
				<verse number="11">ಯೆಹೋವ ದೇವರು ಇಸ್ರಾಯೇಲರಿಗೆ, “ನಾನು ನಿಮ್ಮನ್ನು ಈಜಿಪ್ಟ್, ಅಮೋರಿಯ, ಅಮ್ಮೋನಿಯ, ಫಿಲಿಷ್ಟಿಯ,</verse>
				<verse number="12">ಸೀದೋನ್ಯ, ಅಮಾಲೇಕ್ಯ, ಮಾವೋನ್ಯ ಈ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ; ನಾನು ಅವುಗಳಿಂದ ನಿಮ್ಮನ್ನು ತಪ್ಪಿಸಿಬಿಡಲಿಲ್ಲವೋ?</verse>
				<verse number="13">ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸುತ್ತಾ ಬಂದಿರಿ; ಆದ್ದರಿಂದ ಇನ್ನು ನಾನು ನಿಮ್ಮನ್ನು ರಕ್ಷಿಸುವುದಿಲ್ಲ.</verse>
				<verse number="14">ನೀವು ಹೋಗಿ ನಿಮಗೆ ನೀವೇ ಆಯ್ದುಕೊಂಡ ದೇವರುಗಳಿಗೆ ಕೂಗಿರಿ, ಅವರು ನಿಮ್ಮ ಸಂಕಟದ ಕಾಲದಲ್ಲಿ ನಿಮ್ಮನ್ನು ರಕ್ಷಿಸಲಿ,” ಎಂದರು.</verse>
				<verse number="15">ಇಸ್ರಾಯೇಲರು ಯೆಹೋವ ದೇವರಿಗೆ, “ನಾವು ಪಾಪಮಾಡಿದೆವು. ನೀವು ನಿಮಗೆ ಒಳ್ಳೆಯದಾಗಿ ತೋರುವುದನ್ನೆಲ್ಲಾ ನಮಗೆ ಮಾಡಿರಿ. ಆದರೆ ಈ ಹೊತ್ತು ನಮ್ಮನ್ನು ರಕ್ಷಿಸಿರಿ,” ಎಂದು ಬೇಡಿಕೊಂಡರು.</verse>
				<verse number="16">ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು, ಯೆಹೋವ ದೇವರನ್ನು ಸೇವಿಸಿದರು. ಆಗ ಯೆಹೋವ ದೇವರು ಇಸ್ರಾಯೇಲಿನ ಕಷ್ಟಕ್ಕೋಸ್ಕರ ಮನಸ್ಸಿನಲ್ಲಿ ಬಹಳ ನೊಂದುಕೊಂಡರು.</verse>
				<verse number="17">ಅಮ್ಮೋನಿಯರು ಏಕವಾಗಿ ಕೂಡಿಕೊಂಡು, ಗಿಲ್ಯಾದಿನಲ್ಲಿ ಪಾಳೆಯಮಾಡಿಕೊಂಡರು. ಆದರೆ ಇಸ್ರಾಯೇಲರು ಏಕವಾಗಿ ಕೂಡಿ, ಮಿಚ್ಪೆಯಲ್ಲಿ ಪಾಳೆಯಮಾಡಿಕೊಂಡರು.</verse>
				<verse number="18">ಆಗ ಗಿಲ್ಯಾದಿನ ಜನರೂ, ಪ್ರಧಾನರೂ ಒಬ್ಬರಿಗೊಬ್ಬರು, “ಯಾವನು ಅಮ್ಮೋನಿಯರ ಮೇಲೆ ಯುದ್ಧಮಾಡಲಾರಂಭಿಸುವನೋ, ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ತಲೆಯಾಗಿರುವನು,” ಎಂದು ಮಾತನಾಡಿಕೊಂಡರು.</verse>
			</chapter>
			<chapter number="11">
				<verse number="1">ಗಿಲ್ಯಾದ್ಯನಾದ ಯೆಫ್ತಾಹನು ಬಲಿಷ್ಠನಾದ ಪರಾಕ್ರಮಶಾಲಿಯಾಗಿದ್ದನು. ಅವನು ಒಬ್ಬ ವೇಶ್ಯೆಯಲ್ಲಿ ಹುಟ್ಟಿದ ಗಿಲ್ಯಾದನ ಮಗನು.</verse>
				<verse number="2">ಇದಲ್ಲದೆ ಗಿಲ್ಯಾದನ ಹೆಂಡತಿ ಅವನಿಗೆ ಪುತ್ರರನ್ನು ಪಡೆದಳು. ಅವನ ಹೆಂಡತಿಯ ಮಕ್ಕಳು ದೊಡ್ಡವರಾದಾಗ ಅವರು ಯೆಫ್ತಾಹನಿಗೆ, “ನೀನು ನಮ್ಮ ತಂದೆಯ ಮನೆಯ ಬಾಧ್ಯಸ್ಥನಲ್ಲ. ಏಕೆಂದರೆ ನೀನು ಪರಸ್ತ್ರೀಯ ಮಗನು,” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.</verse>
				<verse number="3">ಆಗ ಯೆಫ್ತಾಹನು ತನ್ನ ಸಹೋದರರ ಬಳಿಯಿಂದ ಓಡಿಹೋಗಿ, ಟೋಬ್ ದೇಶದಲ್ಲಿ ವಾಸವಾಗಿದ್ದನು. ಆ ಸ್ಥಳದ ಪುಂಡಪೋಕರಿಗಳು ಯೆಫ್ತಾಹನ ಬಳಿಗೆ ಕೂಡಿಕೊಂಡು ಅವನನ್ನು ಹಿಂಬಾಲಿಸುತ್ತಿದ್ದರು.</verse>
				<verse number="4">ಕೆಲವು ದಿವಸಗಳಾದ ಮೇಲೆ ಅಮ್ಮೋನಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಿದರು.</verse>
				<verse number="5">ಆದರೆ ಅಮ್ಮೋನಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡುವಾಗ, ಗಿಲ್ಯಾದಿನ ಹಿರಿಯರು ಯೆಫ್ತಾಹನನ್ನು ಟೋಬ್ ದೇಶದಿಂದ ಕರೆದುಕೊಂಡು ಬರಲು ಹೋಗಿ,</verse>
				<verse number="6">ಯೆಫ್ತಾಹನಿಗೆ, “ನಾವು ಅಮ್ಮೋನಿಯರ ಸಂಗಡ ಯುದ್ಧಮಾಡುವಂತೆ, ನೀನು ಬಂದು ನಮ್ಮ ಸೈನ್ಯಾಧಿಪತಿಯಾಗಿರು,” ಎಂದರು.</verse>
				<verse number="7">ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ, “ನೀವಲ್ಲವೇ ನನ್ನನ್ನು ಹಗೆಮಾಡಿ, ನನ್ನ ತಂದೆಯ ಮನೆಯಿಂದ ಹೊರಡಿಸಿದವರು? ಈಗ ನಿಮಗೆ ಇಕ್ಕಟ್ಟು ಬಂದಿರುವಾಗ ನನ್ನ ಬಳಿಗೆ ಏಕೆ ಬಂದಿರಿ?” ಎಂದನು.</verse>
				<verse number="8">ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ನೀನು ನಮ್ಮೊಂದಿಗೆ ಬಂದು ಅಮ್ಮೋನ್ಯರಿಗೆ ವಿರೋಧವಾಗಿ ಯುದ್ಧಮಾಡಿ, ಗಿಲ್ಯಾದಿನ ನಿವಾಸಿಗಳಾದ ನಮ್ಮೆಲ್ಲರಿಗೆ ನೀನು ತಲೆಯಾಗಿರುವ ಹಾಗೆ, ಈಗ ನಿನ್ನ ಬಳಿಗೆ ತಿರುಗಿ ಬಂದೆವು,” ಎಂದರು.</verse>
				<verse number="9">ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ, “ಅಮ್ಮೋನಿಯರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ನೀವು ತಿರುಗಿ ನನ್ನನ್ನು ಮನೆಗೆ ಕರೆತಂದರೆ ಮತ್ತು ಯೆಹೋವ ದೇವರು ಅವರನ್ನು ನನ್ನ ಮುಂದೆ ಒಪ್ಪಿಸಿಕೊಟ್ಟರೆ, ನಾನು ನಿಮಗೆ ತಲೆಯಾಗಿರುವೆನೋ?” ಎಂದನು.</verse>
				<verse number="10">ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ನಾವು ಈ ನಿನ್ನ ಮಾತಿನ ಹಾಗೆ ಮಾಡದೆ ಹೋದರೆ, ಯೆಹೋವ ದೇವರು ನಮ್ಮ ಮತ್ತು ನಿನ್ನ ಮಧ್ಯದಲ್ಲಿ ಸಾಕ್ಷಿಯಾಗಿರಲಿ,” ಎಂದರು.</verse>
				<verse number="11">ಹಾಗೆಯೇ ಯೆಫ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನನ್ನಾಗಿಯೂ, ಸೈನ್ಯಾಧಿಪತಿಯಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಯೆಹೋವ ದೇವರ ಮುಂದೆ ಹೇಳಿದನು.</verse>
				<verse number="12">ಯೆಫ್ತಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನೀನು ನನಗೆ ವಿರೋಧವಾಗಿ ನನ್ನ ಸಂಗಡ ಯುದ್ಧಮಾಡುವುದಕ್ಕೆ ನನ್ನ ದೇಶದಲ್ಲಿ ಬರುವ ಕಾರಣವೇನು?” ಎಂದು ಹೇಳಿ ಕಳುಹಿಸಿದನು.</verse>
				<verse number="13">ಅಮ್ಮೋನಿಯ ಅರಸನು ಯೆಫ್ತಾಹನ ದೂತರಿಗೆ, “ಇಸ್ರಾಯೇಲರು ಈಜಿಪ್ಟಿನಿಂದ ಬರುವಾಗ, ಅರ್ನೋನಿನಿಂದ ಯಬ್ಬೋಕಿನವರೆಗೂ ಮತ್ತು ಯೊರ್ದನಿನವರೆಗೂ ಇರುವ ನನ್ನ ದೇಶವನ್ನು ತೆಗೆದುಕೊಂಡರು. ಆದ್ದರಿಂದ ಈಗ ಅದನ್ನು ನನಗೆ ಸಮಾಧಾನವಾಗಿ ತಿರುಗಿಕೊಡು,” ಎಂದನು.</verse>
				<verse number="14">ಆದರೆ ಯೆಫ್ತಾಹನು ತಿರುಗಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ,</verse>
				<verse number="15">ಅವರಿಗೆ ಯೆಫ್ತಾಹನು ಹೇಳುವ ಮಾತೇನೆಂದರೆ: “ಇದೇ ಇಸ್ರಾಯೇಲರು ಮೋವಾಬಿನ ದೇಶವನ್ನಾದರೂ, ಅಮ್ಮೋನಿಯರ ದೇಶವನ್ನಾದರೂ ತೆಗೆದುಕೊಂಡಿಲ್ಲ.</verse>
				<verse number="16">ಆದರೆ ಇಸ್ರಾಯೇಲು ಈಜಿಪ್ಟಿನಿಂದ ಬರುವಾಗ, ಮರುಭೂಮಿಯಲ್ಲಿ ಕೆಂಪು ಸಮುದ್ರದವರೆಗೆ ನಡೆದು ಕಾದೇಶಿಗೆ ಬಂದು,</verse>
				<verse number="17">ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆ ಆಗಬೇಕು,’ ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದ್ದರಿಂದ ಇಸ್ರಾಯೇಲರು ಕಾದೇಶಿನಲ್ಲಿ ವಾಸಮಾಡಿದರು.</verse>
				<verse number="18">“ಮರುಭೂಮಿಯಲ್ಲಿ ನಡೆದು, ಎದೋಮ್ ದೇಶವನ್ನೂ, ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ, ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು, ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ, ಮೋವಾಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳಿದುಕೊಂಡರು.</verse>
				<verse number="19">“ಇಸ್ರಾಯೇಲರು ಹೆಷ್ಬೋನನ್ನು ಆಳಿದ ಅಮೋರಿಯರ ಅರಸನಾದಂಥ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ, ‘ನಮ್ಮ ಸ್ಥಳಕ್ಕೆ ನಿನ್ನ ದೇಶವನ್ನು ನಾವು ದಾಟಿಹೋಗುವುದಕ್ಕೆ ಅಪ್ಪಣೆ ಆಗಬೇಕು,’ ಎಂದರು.</verse>
				<verse number="20">ಆದರೆ ಸೀಹೋನನು ತನ್ನ ಮೇರೆಯನ್ನು ದಾಟುವುದಕ್ಕೆ ಇಸ್ರಾಯೇಲರನ್ನು ನಂಬದೆ, ತನ್ನ ಜನರನ್ನೆಲ್ಲಾ ಕೂಡಿಸಿ, ಯಹಚಿನಲ್ಲಿ ದಂಡಿಳಿದು, ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಮಾಡಿದನು.</verse>
				<verse number="21">“ಆಗ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಸೀಹೋನನನ್ನೂ, ಅವನ ಸಕಲ ಜನರನ್ನೂ ಇಸ್ರಾಯೇಲರ ಕೈಗೆ ಒಪ್ಪಿಸಿಕೊಟ್ಟರು. ಇಸ್ರಾಯೇಲರು ಸೀಹೋನನನ್ನೂ, ಅವನ ಸಕಲ ಜನರನ್ನೂ ಹೊಡೆದುಬಿಟ್ಟರು. ಹಾಗೆಯೇ ಇಸ್ರಾಯೇಲರು ಆ ದೇಶದಲ್ಲಿ ವಾಸಿಸಿದ್ದ ಅಮೋರಿಯರ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು.</verse>
				<verse number="22">ಅರ್ನೋನಿನಿಂದ ಯಬ್ಬೋಕಿನವರೆಗೂ, ಮರುಭೂಮಿಯಿಂದ ಯೊರ್ದನಿನವರೆಗೂ ಇರುವ ಅಮೋರಿಯರ ಮೇರೆಯಾದ ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡರು.</verse>
				<verse number="23">“ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಅಮೋರಿಯರನ್ನು ತಮ್ಮ ಜನರಾದ ಇಸ್ರಾಯೇಲಿನ ಮುಂದೆ ಹೊರಡಿಸಿರುವಾಗ, ನೀನು ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳುವಿಯೋ?</verse>
				<verse number="24">ಆದರೆ ನಿನ್ನ ದೇವರಾದ ಕೆಮೋಷನು ನಿನ್ನ ಮುಂದೆ ಹೊರಡಿಸುವವರ ದೇಶವನ್ನು ನೀನು ಸ್ವಾಧೀನ ಮಾಡಿಕೊಳ್ಳುವುದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವ ದೇವರು ನಮ್ಮ ಮುಂದೆ ಹೊರಡಿಸುವವರ ದೇಶವನ್ನೆಲ್ಲಾ ನಾವು ಸ್ವಾಧೀನ ಮಾಡಿಕೊಳ್ಳುವೆವು.</verse>
				<verse number="25">ಈಗ ಚಿಪ್ಪೋರನ ಮಗ ಮೋವಾಬಿನ ಅರಸ ಬಾಲಾಕನಿಗಿಂತ ಯಾವುದರಲ್ಲಾದರೂ ನೀನು ಉತ್ತಮನೋ? ಅವನು ಇಸ್ರಾಯೇಲಿಗೆ ವಿರೋಧವಾಗಿ ಎಂದಾದರೂ ವಿವಾದ ಮಾಡಿದನೋ ಅಥವಾ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನೋ?</verse>
				<verse number="26">ಇಸ್ರಾಯೇಲು ಹೆಷ್ಬೋನಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ; ಅರೋಯೇರಿನಲ್ಲಿಯೂ, ಅದರ ಗ್ರಾಮಗಳಲ್ಲಿಯೂ; ಅರ್ನೋನಿನ ತೀರವಾದ ಎಲ್ಲಾ ಪಟ್ಟಣಗಳಲ್ಲಿಯೂ, ಮುನ್ನೂರು ವರ್ಷಗಳಿಂದ ವಾಸಿಸಿರುವಾಗ, ಇಷ್ಟರವರೆಗೆ ನೀವು ಅದನ್ನು ಬಿಡಿಸದೆ ಹೋದದ್ದೇನು?</verse>
				<verse number="27">ಆದ್ದರಿಂದ ನಾನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ. ನೀನೇ ನನ್ನ ಮೇಲೆ ಯುದ್ಧ ಮಾಡುವುದರಿಂದ ನನಗೆ ಕೆಟ್ಟದ್ದನ್ನು ಮಾಡುತ್ತೀಯೆ. ನ್ಯಾಯಾಧಿಪತಿಯಾದ ಯೆಹೋವ ದೇವರು ಈ ಹೊತ್ತು ಇಸ್ರಾಯೇಲರಿಗೂ, ಅಮ್ಮೋನಿಯರಿಗೂ ಮಧ್ಯದಲ್ಲಿ ನ್ಯಾಯತೀರಿಸಲಿ,” ಎಂದನು.</verse>
				<verse number="28">ಹೇಗಿದ್ದರೂ ಅಮ್ಮೋನಿಯರ ಅರಸನು ಯೆಫ್ತಾಹನು ತನಗೆ ಹೇಳಿ ಕಳುಹಿಸಿದ ಮಾತನ್ನು ಕೇಳದೆ ಹೋದನು.</verse>
				<verse number="29">ಆಗ ಯೆಹೋವ ದೇವರ ಆತ್ಮ ಯೆಫ್ತಾಹನ ಮೇಲೆ ಬಂತು. ಅವನು ಗಿಲ್ಯಾದ್, ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ, ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರೆದುರಿಗೆ ಹಾದುಹೋದನು.</verse>
				<verse number="30">ಯೆಫ್ತಾಹನು ಯೆಹೋವ ದೇವರಿಗೆ ಒಂದು ಪ್ರಮಾಣವನ್ನು ಮಾಡಿ, “ನೀನು ಅಮ್ಮೋನಿಯರನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ,</verse>
				<verse number="31">ನಾನು ಅಮ್ಮೋನಿಯರನ್ನು ಜಯಿಸಿ ಹಿಂತಿರುಗಿ ಬರುವಾಗ, ನನ್ನ ಮನೆಯ ಬಾಗಿಲಿನಿಂದ ನನ್ನನ್ನು ಎದುರುಗೊಳ್ಳಲು ಮೊದಲು ಬರುವಂಥದ್ದು ಯೆಹೋವ ದೇವರದಾಗಿರುವುದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು,” ಎಂದನು.</verse>
				<verse number="32">ಹೀಗೆ ಯೆಫ್ತಾಹನು ಅಮ್ಮೋನಿಯರ ಮೇಲೆ ಯುದ್ಧಮಾಡುವುದಕ್ಕೆ ಅವರೆದುರಿಗೆ ಹೊರಟುಹೋದನು. ಯೆಹೋವ ದೇವರು ಅವರನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟರು.</verse>
				<verse number="33">ಯೆಫ್ತಾಹನು ಅವರನ್ನು ಅರೋಯೇರಿನಿಂದ ಮಿನ್ನೀಥಿನ ದಾರಿಯವರೆಗೆ ಮತ್ತು ಆಬೇಲ್ ಕೆರಾಮೀಮಗೆ ಹೋಗುವವರೆಗೆ ಇರುವ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿದನು. ಹೀಗೆ ದೊಡ್ಡ ಜಯಹೊಂದಿ, ಅಮ್ಮೋನಿಯರು ಇಸ್ರಾಯೇಲರಿಗೆ ಶರಣಾದರು.</verse>
				<verse number="34">ಯೆಫ್ತಾಹನು ಮಿಚ್ಪೆಯಲ್ಲಿರುವ ತನ್ನ ಮನೆಗೆ ಹಿಂದಿರುಗಿ ಬರುವಾಗ, ಅವನ ಮಗಳು ದಮ್ಮಡಿಗಳಿಂದಲೂ, ನಾಟ್ಯದಿಂದಲೂ ಅವನನ್ನು ಎದುರುಗೊಳ್ಳಲು ಹೊರಟಳು. ಅವನಿಗೆ ಅವಳು ಒಬ್ಬಳೇ ಮಗಳು. ಅವಳ ಹೊರತಾಗಿ ಅವನಿಗೆ ಮಗನಾಗಲಿ, ಮಗಳಾಗಲಿ ಇರಲಿಲ್ಲ.</verse>
				<verse number="35">ಅವನು ಅವಳನ್ನು ನೋಡಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದೆ. ನನ್ನನ್ನು ತೊಂದರೆ ಪಡಿಸುವವರಲ್ಲಿ ನೀನೂ ಒಬ್ಬಳಾದೆ. ಏಕೆಂದರೆ ನಾನು ಯೆಹೋವ ದೇವರಿಗೆ ನನ್ನ ಬಾಯಿತೆರೆದು, ಪ್ರಮಾಣಮಾಡಿದೆನು, ಹಿಂದೆಗೆಯಲಾರೆನು,” ಎಂದನು.</verse>
				<verse number="36">ಅವಳು ಅವನಿಗೆ, “ಅಪ್ಪಾ, ನೀನು ಯೆಹೋವ ದೇವರಿಗೆ ನಿನ್ನ ಬಾಯಿ ತೆರೆದೆಯಲ್ಲ. ಯೆಹೋವ ದೇವರು ಅಮ್ಮೋನಿಯರಾದ ನಿನ್ನ ಶತ್ರುಗಳಿಗೆ ನಿನ್ನಿಂದ ಮುಯ್ಯಿ ತೀರಿಸಿದ್ದರಿಂದ, ಅವರಿಗೆ ನಿನ್ನ ಬಾಯಿಂದ ಹೊರಟ ಮಾತಿನ ಪ್ರಕಾರವೇ ನನಗೆ ಮಾಡು,” ಎಂದಳು.</verse>
				<verse number="37">ಇದಲ್ಲದೆ ಅವಳು ತನ್ನ ತಂದೆಗೆ, “ಈ ಕಾರ್ಯವು ನನಗೆ ಆಗಲಿ. ಆದರೆ ನಾನೂ, ನನ್ನ ಗೆಳತಿಯರೂ ಕೂಡ ನನ್ನ ಕನ್ಯಾವಸ್ಥೆಗಾಗಿ ಬೆಟ್ಟಗಳ ಮೇಲೆ ಹೋಗಿ, ನನ್ನ ಗೆಳತಿಯರ ಸಂಗಡ ಅಳುವುದಕ್ಕೆ ನನಗೆ ಎರಡು ತಿಂಗಳು ಸಮಯವನ್ನು ಕೊಡು,” ಎಂದಳು.</verse>
				<verse number="38">ಆಗ ಅವನು, “ಎರಡು ತಿಂಗಳು ಹೋಗಿ ಬಾ,” ಎಂದು ಹೇಳಿ ಮಗಳನ್ನು ಕಳುಹಿಸಿಬಿಟ್ಟನು. ಅವಳು ತನ್ನ ಗೆಳತಿಯರ ಸಂಗಡ ಹೋಗಿ, ತನ್ನ ಕನ್ಯಾವಸ್ಥೆಗಾಗಿ ಬೆಟ್ಟದಲ್ಲಿ ಅತ್ತು,</verse>
				<verse number="39">ಎರಡು ತಿಂಗಳು ತೀರಿದಾಗ ತನ್ನ ತಂದೆಯ ಬಳಿಗೆ ಬಂದಳು. ಆಗ ಅವನು ಮಾಡಿದ್ದ ತನ್ನ ಪ್ರಮಾಣದ ಪ್ರಕಾರ ಅವಳಿಗೆ ತೀರ್ಪನ್ನು ಈಡೇರಿಸಿದನು. ಅವಳು ಕನ್ಯೆಯಾಗಿಯೇ ಮರಣಹೊಂದಿದಳು.</verse>
				<verse number="40">ಹೀಗೆ ವರ್ಷಕ್ಕೆ ನಾಲ್ಕು ದಿವಸ ಇಸ್ರಾಯೇಲಿನ ಪುತ್ರಿಯರು ಹೋಗಿ, ಗಿಲ್ಯಾದ್ಯನಾದ ಯೆಫ್ತಾಹನ ಮಗಳಿಗಾಗಿ ಗೋಳಾಡುವುದು ಇಸ್ರಾಯೇಲಿನಲ್ಲಿ ಪದ್ಧತಿ ಆಯಿತು.</verse>
			</chapter>
			<chapter number="12">
				<verse number="1">ಎಫ್ರಾಯೀಮನ ಜನರು ಕೂಡಿಕೊಂಡು ಉತ್ತರದ ಜಪೋನಿಗೆ ಹೋಗಿ, ಯೆಫ್ತಾಹನಿಗೆ, “ನೀನು ಅಮ್ಮೋನಿಯರ ಮೇಲೆ ಯುದ್ಧಮಾಡುವುದಕ್ಕೆ ಹೋದಾಗ, ನಮ್ಮನ್ನು ಏಕೆ ನಿನ್ನ ಸಂಗಡ ಹೋಗಲು ಕರೆಕಳುಹಿಸಲಿಲ್ಲ? ನಾವು ನಿನ್ನ ಮನೆಯನ್ನು ನಿನ್ನನ್ನು ಸಹಿತವಾಗಿ ಬೆಂಕಿಯಿಂದ ಸುಟ್ಟುಬಿಡುತ್ತೇವೆ,” ಎಂದರು.</verse>
				<verse number="2">ಯೆಫ್ತಾಹನು ಅವರಿಗೆ, “ನನಗೂ, ನಮ್ಮ ಜನರಿಗೂ ಅಮ್ಮೋನಿಯರ ಸಂಗಡ ದೊಡ್ಡ ವ್ಯಾಜ್ಯವಿರುವಾಗ, ನಾನು ನಿಮ್ಮನ್ನು ಕರೆದೆನು. ಆದರೆ ನೀವು ನನ್ನನ್ನು ಅವರ ಕೈಯಿಂದ ಬಿಡಿಸಿ ರಕ್ಷಿಸಲಿಲ್ಲ.</verse>
				<verse number="3">ನೀವು ನನ್ನನ್ನು ರಕ್ಷಿಸುವುದಿಲ್ಲವೆಂದು ನಾನು ಕಂಡು ನನ್ನ ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು, ಅಮ್ಮೋನಿಯರಿಗೆ ವಿರೋಧವಾಗಿ ಹೋದೆನು. ಯೆಹೋವ ದೇವರು ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ನೀವು ನನ್ನ ಸಂಗಡ ಯುದ್ಧಮಾಡುವುದಕ್ಕೆ ಈ ಹೊತ್ತು ನನಗೆ ವಿರೋಧವಾಗಿ ಏಕೆ ಬಂದಿರಿ?” ಎಂದನು.</verse>
				<verse number="4">ಆಗ ಯೆಫ್ತಾಹನು ಗಿಲ್ಯಾದ್ ಜನರೆಲ್ಲರನ್ನು ಕೂಡಿಸಿ, ಎಫ್ರಾಯೀಮ್ಯರ ಸಂಗಡ ಯುದ್ಧಮಾಡಿದನು. ಏಕೆಂದರೆ, “ಎಫ್ರಾಯೀಮ್ಯರನ್ನು ಮನಸ್ಸೆಯವರ ಮಧ್ಯದಲ್ಲಿದ್ದ ಗಿಲ್ಯಾದ್ಯರಾದ ನೀವು ಸ್ವಕುಲವನ್ನು ಬಿಟ್ಟು ತಪ್ಪಿಸಿಕೊಂಡವರಾಗಿದ್ದೀರಿ,” ಎಂದು ಎಫ್ರಾಯೀಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಎಫ್ರಾಯೀಮ್ಯರನ್ನು ಹೊಡೆದರು.</verse>
				<verse number="5">ಗಿಲ್ಯಾದ್ಯರು ಎಫ್ರಾಯೀಮ್ಯರಿಗೆ ಮುಂದುಗಡೆ ಯೊರ್ದನ್ ನದಿ ರೇವುಗಳನ್ನು ಹಿಡಿದರು. ಆಗ ಏನಾಯಿತೆಂದರೆ, ಎಫ್ರಾಯೀಮ್ಯರಲ್ಲಿ ತಪ್ಪಿಸಿಕೊಂಡ ಯಾವನಾದರೂ ಬಂದು, “ದಾಟುತ್ತೇನೆ,” ಎಂದು ಹೇಳಿದರೆ, ಗಿಲ್ಯಾದ್ಯರು, “ನೀನು ಎಫ್ರಾಯೀಮ್ಯನೋ?” ಎಂದು ಅವನನ್ನು ಕೇಳುತ್ತಿದ್ದರು. ಅವನು, “ಇಲ್ಲ,” ಎಂದರೆ, ಅವನಿಗೆ, “ನೀನು ಷಿಬ್ಬೋಲೆತ್ ಅನ್ನು,” ಎಂದು ಹೇಳುತ್ತಿದ್ದರು.</verse>
				<verse number="6">ಆಗ ಅವನು ಹಾಗೆ ಹೇಳಲಾರದೆ, “ಸಿಬ್ಬೋಲೆತ್,” ಎಂದು ಉಚ್ಛರಿಸುವವನನ್ನು ಹಿಡಿದು ಯೊರ್ದನ್ ನದಿ ರೇವುಗಳ ಬಳಿಯಲ್ಲಿ ಕೊಂದುಹಾಕುತ್ತಿದ್ದರು. ಹೀಗೆ ಆ ಕಾಲದಲ್ಲಿ ಎಫ್ರಾಯೀಮ್ಯರೊಳಗೆ ನಾಲ್ವತ್ತೆರಡು ಸಾವಿರ ಜನರು ನಾಶವಾದರು.</verse>
				<verse number="7">ಯೆಫ್ತಾಹನು ಇಸ್ರಾಯೇಲರಿಗೆ ಆರು ವರ್ಷ ನ್ಯಾಯತೀರಿಸಿದನು. ಅನಂತರ ಗಿಲ್ಯಾದ್ಯನಾದ ಯೆಫ್ತಾಹನು ಮರಣಹೊಂದಿದನು. ಅವನ ಶವವನ್ನು ಗಿಲ್ಯಾದ್ ಪಟ್ಟಣಗಳ ಒಂದರಲ್ಲಿ ಸಮಾಧಿಮಾಡಿದರು.</verse>
				<verse number="8">ಅವನ ತರುವಾಯ ಬೇತ್ಲೆಹೇಮಿನವನಾದ ಇಬ್ಚಾನನು ಇಸ್ರಾಯೇಲಿಗೆ ನ್ಯಾಯತೀರಿಸಿದನು.</verse>
				<verse number="9">ಅವನಿಗೆ ಮೂವತ್ತು ಮಂದಿ ಪುತ್ರರು, ಮೂವತ್ತು ಮಂದಿ ಪುತ್ರಿಯರು ಇದ್ದರು. ಪುತ್ರಿಯರನ್ನು ಹೊರಗೆ ಮದುವೆ ಮಾಡಿಕೊಟ್ಟನು; ಹೊರಗಿನಿಂದ ಮೂವತ್ತು ಮಂದಿ ಕನ್ಯೆಯರನ್ನು ತನ್ನ ಪುತ್ರರಿಗೆ ತೆಗೆದುಕೊಂಡನು. ಅವನು ಇಸ್ರಾಯೇಲಿಗೆ ಏಳು ವರ್ಷ ನ್ಯಾಯತೀರಿಸಿದನು.</verse>
				<verse number="10">ನಂತರ ಇಬ್ಚಾನನು ಮರಣಹೊಂದಿ ಬೇತ್ಲೆಹೇಮಿನಲ್ಲಿ ಸಮಾಧಿಯಾದನು.</verse>
				<verse number="11">ಅವನ ತರುವಾಯ ಜೆಬುಲೂನಿನವನಾದ ಏಲೋನನು ಇಸ್ರಾಯೇಲರಿಗೆ ನ್ಯಾಯತೀರಿಸಿದನು. ಅವನು ಹತ್ತು ವರ್ಷಗಳು ಇಸ್ರಾಯೇಲಿಗೆ ನ್ಯಾಯತೀರಿಸಿದನು.</verse>
				<verse number="12">ಜೆಬುಲೂನಿನವನಾದ ಏಲೋನನು ಮರಣಹೊಂದಿ, ಜೆಬುಲೂನ್ ದೇಶವಾದ ಅಯ್ಯಾಲೋನಿನಲ್ಲಿ ಅವನ ಶವವನ್ನು ಸಮಾಧಿಮಾಡಿದರು.</verse>
				<verse number="13">ಅವನ ತರುವಾಯ ಪಿರಾತೋನ್ಯನಾದ ಹಿಲ್ಲೇಲನ ಮಗನಾದ ಅಬ್ದೋನನು ಇಸ್ರಾಯೇಲಿಗೆ ನ್ಯಾಯತೀರಿಸಿದನು.</verse>
				<verse number="14">ಅವನಿಗೆ ಎಪ್ಪತ್ತು ಕತ್ತೆಗಳ ಮೇಲೆ ಏರುವ ನಾಲ್ವತ್ತು ಮಂದಿ ಮಕ್ಕಳೂ, ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಅವನು ಇಸ್ರಾಯೇಲಿಗೆ ಎಂಟು ವರ್ಷ ನ್ಯಾಯತೀರಿಸಿದನು.</verse>
				<verse number="15">ಪಿರಾತೋನ್ಯನಾದ ಹಿಲ್ಲೇಲನ ಮಗನಾದ ಅಬ್ದೋನನು ಮರಣಹೊಂದಿ, ಎಫ್ರಾಯೀಮ್ ದೇಶದಲ್ಲಿ ಅಮಾಲೇಕ್ಯರ ಬೆಟ್ಟದಲ್ಲಿರುವ ಪಿರಾತೋನಿನಲ್ಲಿ ಅವನ ಶವವನ್ನು ಸಮಾಧಿಮಾಡಿದರು.</verse>
			</chapter>
			<chapter number="13">
				<verse number="1">ಇಸ್ರಾಯೇಲರು ತಿರುಗಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದ, ಯೆಹೋವ ದೇವರು ಅವರನ್ನು ನಾಲ್ವತ್ತು ವರ್ಷದವರೆಗೆ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಟ್ಟರು.</verse>
				<verse number="2">ಆದರೆ ಚೊರ್ಗದವನಾದ ದಾನನ ಗೋತ್ರದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿಯು ಮಕ್ಕಳನ್ನು ಹೆರದೆ, ಬಂಜೆಯಾಗಿದ್ದಳು.</verse>
				<verse number="3">ಯೆಹೋವ ದೇವರ ದೂತನು ಆ ಸ್ತ್ರೀಗೆ ಪ್ರತ್ಯಕ್ಷವಾಗಿ ಅವಳಿಗೆ, “ಇಗೋ, ನೀನು ಮಕ್ಕಳನ್ನು ಹೆರದೆ ಬಂಜೆಯಾಗಿದ್ದೀಯೆ. ಆದರೆ ನೀನು ಗರ್ಭಧರಿಸಿ ಒಬ್ಬ ಮಗನನ್ನು ಹೆರುವೆ.</verse>
				<verse number="4">ಆದ್ದರಿಂದ ನೀನು ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ, ಅಶುಚಿಯಾದ ಒಂದನ್ನಾದರೂ ತಿನ್ನದೆ, ಎಚ್ಚರಿಕೆಯಾಗಿರಬೇಕು.</verse>
				<verse number="5">ನೀನು ಗರ್ಭವನ್ನು ಧರಿಸಿ, ಒಬ್ಬ ಮಗನನ್ನು ಹೆರುವೆ; ಅವನ ತಲೆಯ ಮೇಲೆ ಕ್ಷೌರದ ಕತ್ತಿ ಬರಬಾರದು. ಏಕೆಂದರೆ ಗರ್ಭದಿಂದಲೇ ಆ ಹುಡುಗನು ದೇವರಿಗೆ ಪ್ರತಿಷ್ಠಿತನಾದ ನಾಜೀರನಾಗಿರುವನು. ಅವನು ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ, ರಕ್ಷಿಸಲು ಪ್ರಾರಂಭಿಸುವನು,” ಎಂದನು.</verse>
				<verse number="6">ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆ, “ಒಬ್ಬ ದೇವರ ಮನುಷ್ಯ ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾ ಭಯಂಕರವಾಗಿತ್ತು. ನಾನು ಅವನನ್ನು ಎಲ್ಲಿಂದ ಬಂದೆ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.</verse>
				<verse number="7">ಅವನು ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ; ಈಗ ನೀನು ದ್ರಾಕ್ಷಾರಸವನ್ನೂ, ಮದ್ಯವನ್ನೂ ಕುಡಿಯದೆ, ಅಶುದ್ಧವಾದ ಒಂದನ್ನಾದರೂ ತಿನ್ನದೆ ಇರು. ಏಕೆಂದರೆ ಆ ಹುಡುಗನು ಹುಟ್ಟಿದಂದಿನಿಂದ ಮರಣಹೊಂದುವವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು,’ ಎಂದಳು.”</verse>
				<verse number="8">ಆಗ ಮಾನೋಹನು ಯೆಹೋವ ದೇವರಿಗೆ ಬೇಡಿಕೊಂಡು, “ನನ್ನ ಕರ್ತದೇವರೇ, ನೀವು ಕಳುಹಿಸಿದ ದೇವರ ಮನುಷ್ಯನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು, ಹುಟ್ಟುವ ಕೂಸಿಗೋಸ್ಕರ ನಾವು ಮಾಡಬೇಕಾದದ್ದನ್ನು ನಮಗೆ ಕಲಿಸಲಿ,” ಎಂದು ಪ್ರಾರ್ಥಿಸಿದನು.</verse>
				<verse number="9">ದೇವರು ಮಾನೋಹನ ಬೇಡಿಕೆಯನ್ನು ಕೇಳಿದರು. ಆ ಸ್ತ್ರೀಯು ಹೊಲದಲ್ಲಿ ಕುಳಿತಿರುವಾಗ, ದೇವದೂತನು ತಿರುಗಿ ಅವಳ ಬಳಿಗೆ ಬಂದನು. ಆಗ ಅವಳ ಗಂಡನಾದ ಮಾನೋಹನು ಅವಳ ಸಂಗಡ ಇರಲಿಲ್ಲ.</verse>
				<verse number="10">ಆದ್ದರಿಂದ ಅವಳು ಬೇಗ ಓಡಿಹೋಗಿ, ತನ್ನ ಗಂಡನಿಗೆ, “ಇಗೋ, ಆ ದಿನ ನನಗೆ ಪ್ರತ್ಯಕ್ಷನಾದ ಮನುಷ್ಯನು ತಿರುಗಿ ನನಗೆ ಪ್ರತ್ಯಕ್ಷನಾಗಿದ್ದಾನೆ,” ಎಂದು ತಿಳಿಸಿದಳು.</verse>
				<verse number="11">ಆಗ ಮಾನೋಹನು ಎದ್ದು ತನ್ನ ಹೆಂಡತಿಯೊಡನೆ ಹೋಗಿ, ಅವನ ಬಳಿಗೆ ಬಂದು, ಅವನಿಗೆ, “ಈ ಸ್ತ್ರೀಯ ಸಂಗಡ ಮಾತನಾಡಿದವನು ನೀನೋ?” ಎಂದನು. ಅವನು, “ನಾನೇ,” ಎಂದನು.</verse>
				<verse number="12">ಮಾನೋಹನು, “ನೀನು ಹೇಳಿದ ಮಾತುಗಳು ನೆರವೇರುವಾಗ, ನಾವು ಆ ಕೂಸಿಗೋಸ್ಕರ ಮಾಡತಕ್ಕದ್ದೇನು? ಅವನನ್ನು ಹೇಗೆ ನಡಿಸತಕ್ಕದ್ದು?” ಎಂದನು.</verse>
				<verse number="13">ಯೆಹೋವ ದೇವರ ದೂತನು ಮಾನೋಹನಿಗೆ, “ನಾನು ಈ ಸ್ತ್ರೀಗೆ ಹೇಳಿದ್ದೆಲ್ಲದರಲ್ಲಿ ಅವಳು ಎಚ್ಚರಿಕೆಯಾಗಿದ್ದು,</verse>
				<verse number="14">ದ್ರಾಕ್ಷಿ ಗಿಡದಲ್ಲಿ ಹುಟ್ಟುವ ಒಂದನ್ನೂ ತಿನ್ನದೆ, ದ್ರಾಕ್ಷಾರಸವನ್ನೂ, ಮದ್ಯವನ್ನೂ ಕುಡಿಯದೆ, ಅಶುಚಿಯಾದ ಒಂದನ್ನೂ ತಿನ್ನದೆ ಇದ್ದು, ನಾನು ಅವಳಿಗೆ ಆಜ್ಞಾಪಿಸಿದ್ದೆಲ್ಲಾ ಕೈಗೊಳ್ಳಲಿ,” ಎಂದನು.</verse>
				<verse number="15">ಮಾನೋಹನು ಯೆಹೋವ ದೇವರ ದೂತನಿಗೆ, “ನಾವು ನಿನಗೋಸ್ಕರ ಮೇಕೆಯ ಮರಿಯನ್ನು ಸಿದ್ಧಮಾಡುವವರೆಗೆ ನಿಲ್ಲಿಸಿಕೊಳ್ಳುತ್ತೇವೆ ಎಂದು ಬೇಡುತ್ತೇನೆ,” ಎಂದನು.</verse>
				<verse number="16">ಯೆಹೋವ ದೇವರ ದೂತನು ಮಾನೋಹನಿಗೆ, “ನೀನು ನನ್ನನ್ನು ನಿಲ್ಲಿಸಿಕೊಂಡರೂ, ನಾನು ನಿನ್ನ ರೊಟ್ಟಿಯನ್ನು ತಿನ್ನುವುದಿಲ್ಲ; ನೀನು ದಹನಬಲಿಯನ್ನು ಅರ್ಪಿಸಿದರೆ, ಅದನ್ನು ಯೆಹೋವ ದೇವರಿಗೆ ಅರ್ಪಿಸಬೇಕು,” ಎಂದನು.</verse>
				<verse number="17">ಏಕೆಂದರೆ ಅವನು ಯೆಹೋವ ದೇವರ ದೂತನೆಂದು ಮಾನೋಹನು ಅರಿಯದೆ ಇದ್ದನು. ಮಾನೋಹನು ಯೆಹೋವ ದೇವರ ದೂತನಿಗೆ, “ನೀನು ಹೇಳಿದ ಮಾತುಗಳು ನೆರವೇರುವಾಗ, ನಾವು ನಿನ್ನನ್ನು ಘನಪಡಿಸುವ ಹಾಗೆ ನಿನ್ನ ಹೆಸರೇನು?” ಎಂದನು.</verse>
				<verse number="18">ಆದರೆ ಯೆಹೋವ ದೇವರ ದೂತನು ಅವನಿಗೆ, “ನನ್ನ ಹೆಸರು ಏನೆಂದು ನೀನು ಕೇಳುವುದೇನು? ಆ ಹೆಸರು ಆಶ್ಚರ್ಯಕರವಾದದ್ದು,” ಎಂದನು.</verse>
				<verse number="19">ಹೀಗೆ ಮಾನೋಹನು ಮೇಕೆಯ ಮರಿಯನ್ನೂ, ಧಾನ್ಯ ಸಮರ್ಪಣೆಯನ್ನೂ ತಂದು, ಅವುಗಳನ್ನು ಬಂಡೆಯ ಮೇಲೆ ಯೆಹೋವ ದೇವರಿಗೆ ಅರ್ಪಿಸಿದನು. ಮಾನೋಹನೂ, ಅವನ ಹೆಂಡತಿಯೂ ನೋಡುವಾಗ, ಯೆಹೋವ ದೇವರ ದೂತನು ಆಶ್ಚರ್ಯಕರವಾದ ಸಂಗತಿಯನ್ನು ಮಾಡಿದನು.</verse>
				<verse number="20">ಅಗ್ನಿ ಜ್ವಾಲೆಯು ಬಲಿಪೀಠದಿಂದ ಆಕಾಶಕ್ಕೆ ಸರಿಯಾಗಿ ಏಳುವಾಗ, ಯೆಹೋವ ದೇವರ ದೂತನು ಬಲಿಪೀಠದ ಜ್ವಾಲೆಯಲ್ಲಿ ಮೇಲಕ್ಕೆ ಹೋದನು. ಅದನ್ನು ಮಾನೋಹನೂ, ಅವನ ಹೆಂಡತಿಯೂ ಕಂಡು, ನೆಲದ ಮೇಲೆ ಬೋರಲು ಬಿದ್ದರು.</verse>
				<verse number="21">ಯೆಹೋವ ದೇವರ ದೂತನು ಮಾನೋಹನಿಗೂ, ಅವನ ಹೆಂಡತಿಗೂ ತಿರುಗಿ ಕಾಣಿಸಲಿಲ್ಲ. ಆಗ ಮಾನೋಹನು, ಅವನು ದೇವರ ದೂತನು ಎಂದು ತಿಳಿದುಕೊಂಡನು.</verse>
				<verse number="22">ಮಾನೋಹನು ತನ್ನ ಹೆಂಡತಿಗೆ, “ನಾವು ದೇವರನ್ನು ಕಂಡದ್ದರಿಂದ ನಿಶ್ಚಯವಾಗಿ ಸಾಯುವೆವು,” ಎಂದನು.</verse>
				<verse number="23">ಅವನ ಹೆಂಡತಿ ಅವನಿಗೆ, “ಯೆಹೋವ ದೇವರು ನಮ್ಮನ್ನು ಕೊಲ್ಲಬೇಕೆಂದಿದ್ದರೆ, ಅವರು ನಮ್ಮ ಕೈಯಿಂದ ದಹನಬಲಿಯನ್ನೂ, ಅರ್ಪಣೆಯನ್ನೂ ಸ್ವೀಕರಿಸುತ್ತಿರಲಿಲ್ಲ; ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ. ಈಗ ಹೇಳಿದವುಗಳನ್ನು ನಮಗೆ ತಿಳಿಯಮಾಡುತ್ತಿರಲಿಲ್ಲ,” ಎಂದಳು.</verse>
				<verse number="24">ಆ ಸ್ತ್ರೀಯು ಮಗನನ್ನು ಹೆತ್ತು, ಅವನಿಗೆ ಸಂಸೋನ ಎಂದು ಹೆಸರಿಟ್ಟಳು. ಆ ಹುಡುಗನು ಬೆಳೆದನು. ಯೆಹೋವ ದೇವರು ಅವನನ್ನು ಆಶೀರ್ವದಿಸಿದರು.</verse>
				<verse number="25">ಇದಲ್ಲದೆ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಯೆಹೋವ ದೇವರ ಆತ್ಮರು ಆಗಾಗ್ಗೆ ಪ್ರೇರೇಪಿಸುವುದಕ್ಕೆ ಪ್ರಾರಂಭಿಸಿದರು.</verse>
			</chapter>
			<chapter number="14">
				<verse number="1">ಸಂಸೋನನು ತಿಮ್ನಾತಿಗೆ ಇಳಿದು, ಅಲ್ಲಿ ತಿರುಗಿ ಫಿಲಿಷ್ಟಿಯರ ಪುತ್ರಿಯರ ಒಬ್ಬ ಸ್ತ್ರೀಯನ್ನು ಕಂಡು,</verse>
				<verse number="2">ತನ್ನ ತಂದೆತಾಯಿಗಳ ಬಳಿಗೆ ಬಂದು ಅವರಿಗೆ, “ನಾನು ತಿಮ್ನಾತಿನಲ್ಲಿ ಫಿಲಿಷ್ಟಿಯರ ಪುತ್ರಿಯರೊಳಗೆ ಒಬ್ಬ ಸ್ತ್ರೀಯನ್ನು ಕಂಡೆನು. ಈಗ ಅವಳನ್ನು ನನಗೆ ಮದುವೆ ಮಾಡಿರಿ,” ಎಂದನು.</verse>
				<verse number="3">ಆಗ ಅವನ ತಂದೆಯೂ, ತಾಯಿಯೂ ಅವನಿಗೆ, “ನಿನಗೆ ಸುನ್ನತಿಯಾಗದ ಫಿಲಿಷ್ಟಿಯರಲ್ಲಿ ಹೆಂಡತಿಯನ್ನು ತೆಗೆದುಕೊಳ್ಳುವುದಕ್ಕೆ ನಿನ್ನ ಸಹೋದರರ ಪುತ್ರಿಯರಲ್ಲಿಯೂ, ನಮ್ಮ ಎಲ್ಲಾ ಜನರಲ್ಲಿಯೂ ಸ್ತ್ರೀ ಇಲ್ಲವೋ?” ಎಂದರು. ಆದರೆ ಸಂಸೋನನು ತನ್ನ ತಂದೆಗೆ, “ಅವಳನ್ನು ನನಗೆ ತೆಗೆದುಕೋ. ಏಕೆಂದರೆ ಅವಳು ನನ್ನ ಮನಸ್ಸಿಗೆ ಒಪ್ಪಿದ್ದಾಳೆ,” ಎಂದನು.</verse>
				<verse number="4">ಇದು ಯೆಹೋವ ದೇವರಿಂದ ಉಂಟಾಯಿತೆಂದು ಅವನ ತಂದೆತಾಯಂದಿರು ಅರಿಯದೆ ಇದ್ದರು. ಏಕೆಂದರೆ ಫಿಲಿಷ್ಟಿಯರಿಗೆ ವಿರೋಧವಾಗಿ ಅವನು ಕಾರಣವನ್ನು ಹುಡುಕಿದನು. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಾಯೇಲರನ್ನು ಆಳುತ್ತಿದ್ದರು.</verse>
				<verse number="5">ಆಗ ಸಂಸೋನನೂ, ಅವನ ತಂದೆತಾಯಿಗಳೂ ತಿಮ್ನಾತಿಗೆ ಹೋಗುತ್ತಿದ್ದರು. ಅವರು ತಿಮ್ನತಿನ ದ್ರಾಕ್ಷಿತೋಟಗಳ ಬಳಿಗೆ ಬಂದಾಗ, ಪ್ರಾಯದ ಸಿಂಹವು ಗರ್ಜಿಸುತ್ತಾ ಅವನ ಎದುರಿಗೆ ಬಂದಿತು.</verse>
				<verse number="6">ಅವನು ತನ್ನ ಕೈಯಲ್ಲಿ ಏನೂ ಇಲ್ಲದಿದ್ದರೂ, ಯೆಹೋವ ದೇವರ ಆತ್ಮ ಅವನ ಮೇಲೆ ಬಂದದ್ದರಿಂದ ಅದನ್ನು ಒಂದು ಮೇಕೆಯ ಮರಿಯ ಹಾಗೆ ಸೀಳಿ ಬಿಟ್ಟನು. ಆದರೆ ಅವನು ತಾನು ಮಾಡಿದ್ದನ್ನು ತನ್ನ ತಂದೆತಾಯಿಗಳಿಗೆ ತಿಳಿಸಲಿಲ್ಲ.</verse>
				<verse number="7">ಅವನು ಹೋಗಿ ಆ ಸ್ತ್ರೀಯ ಸಂಗಡ ಮಾತನಾಡಿದನು. ಅವಳು ಸಂಸೋನನ ಕಣ್ಣಿಗೆ ಒಪ್ಪುವವಳಾಗಿದ್ದಳು.</verse>
				<verse number="8">ಸ್ವಲ್ಪ ಸಮಯವಾದ ಮೇಲೆ ಅವನು ಅವಳನ್ನು ಮದುವೆ ಮಾಡಿಕೊಳ್ಳುವುದಕ್ಕೆ ತಿರುಗಿ ಬರುವಾಗ, ಸಿಂಹದ ಹೆಣವನ್ನು ನೋಡುವುದಕ್ಕೆ ಪಕ್ಕಕ್ಕೆ ಹೋದಾಗ, ಸಿಂಹದ ಹೆಣದಲ್ಲಿ ಜೇನುಹುಳಗಳನ್ನು ಮತ್ತು ಜೇನನ್ನು ಕಂಡನು.</verse>
				<verse number="9">ಅದನ್ನು ಅವನು ತನ್ನ ಕೈಗಳಲ್ಲಿ ತೆಗೆದುಕೊಂಡು ತಿನ್ನುತ್ತಾ, ತನ್ನ ತಂದೆತಾಯಿಗಳ ಬಳಿಗೆ ಹೋಗಿ ಅವರಿಗೂ ಕೊಟ್ಟನು; ಅವರೂ ತಿಂದರು. ಆದರೆ ಸಿಂಹದ ಹೆಣದಿಂದ ತಾನು ಜೇನು ತೆಗೆದುಕೊಂಡೆನೆಂದು ಅವರಿಗೆ ತಿಳಿಸಲಿಲ್ಲ.</verse>
				<verse number="10">ಅವನ ತಂದೆಯು ಆ ಸ್ತ್ರೀ ಇರುವ ಸ್ಥಳಕ್ಕೆ ಬಂದಾಗ, ಸಂಸೋನನು ಪ್ರಾಯಸ್ಥರು ಮಾಡುವ ಪದ್ಧತಿಯ ಪ್ರಕಾರ ಅಲ್ಲಿ ಔತಣ ಮಾಡಿಸಿದನು.</verse>
				<verse number="11">ಅವರು ಅವನನ್ನು ಕಂಡಾಗ, ಅವನ ಸಂಗಡ ಇರುವುದಕ್ಕೆ ಮೂವತ್ತು ಮಂದಿ ಸಂಗಡಿಗರನ್ನು ಕೊಟ್ಟರು.</verse>
				<verse number="12">ಅವರಿಗೆ ಸಂಸೋನನು, “ನಾನು ನಿಮಗೆ ಒಂದು ಒಗಟನ್ನು ಹೇಳುವೆನು; ನೀವು ಅದನ್ನು ಔತಣದ ಈ ಏಳು ದಿವಸಗಳಲ್ಲಿ ಗ್ರಹಿಸಿಕೊಂಡು ಹೇಳಿದರೆ, ನಾನು ನಿಮಗೆ ಮೂವತ್ತು ದುಪ್ಪಟಿಗಳನ್ನು, ಮೂವತ್ತು ಜೊತೆ ಬಟ್ಟೆಗಳನ್ನು ಕೊಡುವೆನು.</verse>
				<verse number="13">ನಿಮ್ಮಿಂದ ಗ್ರಹಿಸಲು ಆಗದೆ ಹೋದರೆ, ನೀವು ನನಗೆ ಮೂವತ್ತು ದುಪ್ಪಟಿಗಳನ್ನು, ಮೂವತ್ತು ಜೊತೆ ಬಟ್ಟೆಗಳನ್ನು ಕೊಡಬೇಕು,” ಎಂದನು. ಅವರು ಅವನಿಗೆ, “ನೀನು ನಿನ್ನ ಒಗಟನ್ನು ಹೇಳು, ಅದನ್ನು ಕೇಳೋಣ,” ಎಂದರು.</verse>
				<verse number="14">ಆಗ ಅವನು ಅವರಿಗೆ ಹೇಳಿದ್ದೇನೆಂದರೆ, “ತಿಂದು ಬಿಡುವಂಥದ್ದರಿಂದ ತಿನ್ನತಕ್ಕದ್ದು ಹೊರಟಿತು. ಬಲಿಷ್ಠವಾದದ್ದರಿಂದ ಸಿಹಿಯು ಹೊರಟಿತು.” ಒಗಟನ್ನು ಅವರು ಮೂರು ದಿವಸ ಬಿಡಿಸಲಾರದೆ ಹೋದರು.</verse>
				<verse number="15">ನಾಲ್ಕನೆಯ ದಿವಸದಲ್ಲಿ ಅವರು ಸಂಸೋನನ ಹೆಂಡತಿಗೆ, “ನಾವು ನಿನ್ನನ್ನೂ, ನಿನ್ನ ತಂದೆಯ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಡದ ಹಾಗೆ ನೀನು ನಿನ್ನ ಗಂಡನ ಆ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರಳುಗೊಳಿಸು. ನೀನು ನಮಗಿರುವುದೆಲ್ಲವನ್ನು ಕಸಿದುಕೊಳ್ಳುವುದಕ್ಕೆ ಅಲ್ಲವೇ ನಮ್ಮನ್ನು ಇಲ್ಲಿಗೆ ಕರೆಸಿದೆ?” ಎಂದರು.</verse>
				<verse number="16">ಆಗ ಸಂಸೋನನ ಹೆಂಡತಿ ಅವನ ಮುಂದೆ ಅತ್ತು, “ನನ್ನನ್ನು ಹಗೆ ಮಾಡುತ್ತಿರುವೆ. ನೀನು ನನ್ನನ್ನು ನಿಜವಾಗಿ ಪ್ರೀತಿ ಮಾಡುವುದಿಲ್ಲ, ಏಕೆಂದರೆ ನೀನು ನನ್ನ ಜನರಿಗೆ ಒಂದು ಒಗಟನ್ನು ಹೇಳಿ ನನಗೆ ತಿಳಿಸದೆ ಹೋದೆ,” ಎಂದಳು. ಅವನು ಅವಳಿಗೆ, “ಇಗೋ, ನಾನು ನನ್ನ ತಂದೆತಾಯಿಗೆ ಅದನ್ನು ತಿಳಿಸಲಿಲ್ಲ. ನಿನಗೆ ತಿಳಿಸುವೆನೋ?” ಎಂದನು.</verse>
				<verse number="17">ಅವಳು ಔತಣದ ಏಳು ದಿವಸಗಳಲ್ಲಿಯೂ ಅವನ ಮುಂದೆ ಅಳುತ್ತಿದ್ದಳು. ಆದರೆ ಏಳನೆಯ ದಿವಸದಲ್ಲಿ ಅವಳು, ಅವನನ್ನು ಬಹಳವಾಗಿ ಪೀಡಿಸಿದ್ದರಿಂದ ಒಗಟಿನ ಅರ್ಥವನ್ನು ತಿಳಿಸಿದನು. ಆಗ ಆಕೆ ತನ್ನ ಜನರಿಗೆ ಆ ಒಗಟನ್ನು ತಿಳಿಸಿದಳು.</verse>
				<verse number="18">ಏಳನೆಯ ದಿವಸದಲ್ಲಿ ಸೂರ್ಯ ಮುಳುಗುವುದಕ್ಕಿಂತ ಮುಂಚೆ ಆ ಊರಿನವರು ಅವನಿಗೆ, “ಜೇನಿಗಿಂತ ಸಿಹಿಯಾದದ್ದೇನು? ಸಿಂಹಕ್ಕಿಂತ ಬಲಿಷ್ಠವಾದದ್ದೇನು?” ಎಂದು ಹೇಳಿದರು. ಅವನು ಉತ್ತರವಾಗಿ ಅವರಿಗೆ, “ನೀವು ನನ್ನ ಕಡಸಿನಿಂದ ಉಳದೆ ಇದ್ದರೆ, ನನ್ನ ಒಗಟನ್ನು ಗ್ರಹಿಸಲಾರಿರಿ.”</verse>
				<verse number="19">ಯೆಹೋವ ದೇವರ ಆತ್ಮ ಅವನ ಮೇಲೆ ಬಂದದ್ದರಿಂದ, ಅವನು ಅಷ್ಕೆಲೋನಿಗೆ ಹೋಗಿ, ಆ ಊರಿನಲ್ಲಿ ಮೂವತ್ತು ಜನರನ್ನು ವಧಿಸಿ, ಸುಲಿದುಕೊಂಡು ಒಗಟನ್ನು ತಿಳಿಸಿದವರಿಗೆ ದುಸ್ತು ವಸ್ತ್ರಗಳನ್ನು ಕೊಟ್ಟನು.</verse>
				<verse number="20">ಅವನು ಕೋಪಗೊಂಡು ತನ್ನ ತಂದೆಯ ಮನೆಗೆ ಹೊರಟುಹೋದನು. ಆದರೆ ಸಂಸೋನನ ಹೆಂಡತಿಯನ್ನು ಅವನ ಸಂಗಡ ಸ್ನೇಹಿತನಾಗಿದ್ದವನಿಗೆ ಮದುವೆ ಮಾಡಿಕೊಟ್ಟರು.</verse>
			</chapter>
			<chapter number="15">
				<verse number="1">ಸ್ವಲ್ಪ ಸಮಯವಾದ ತರುವಾಯ, ಗೋಧಿಯ ಸುಗ್ಗಿಕಾಲದಲ್ಲಿ ಸಂಸೋನನು ತನ್ನ ಹೆಂಡತಿಯನ್ನು ನೋಡುವುದಕ್ಕೆ ಒಂದು ಮೇಕೆಯ ಮರಿಯನ್ನು ತೆಗೆದುಕೊಂಡುಹೋಗಿ, ಅವಳ ತಂದೆಗೆ, “ನನ್ನ ಹೆಂಡತಿಯ ಕೋಣೆಗೆ ಹೋಗುತ್ತೇನೆ,” ಎಂದನು.</verse>
				<verse number="2">ಆದರೆ ಅವಳ ತಂದೆಯು ಅವನನ್ನು ಅನುಮತಿಸದೆ ಅವನಿಗೆ, “ನೀನು ಅವಳನ್ನು ಪೂರ್ಣವಾಗಿ ಹಗೆ ಮಾಡಿದೆ ಎಂದು ನಾನು ನಿಜವಾಗಿ ತಿಳಿದು, ಅವಳನ್ನು ನಿನ್ನ ಜೊತೆಯವನಿಗೆ ಮದುವೆ ಮಾಡಿಕೊಟ್ಟೆನು. ಅವಳ ತಂಗಿ ಅವಳಿಗಿಂತ ಸುಂದರಿಯಾಗಿದ್ದಾಳೆ. ಅವಳಿಗೆ ಬದಲಾಗಿ ಇವಳನ್ನು ಮದುವೆಯಾಗು,” ಎಂದನು.</verse>
				<verse number="3">ಆಗ ಸಂಸೋನನು, “ಅವರನ್ನು ಕುರಿತು, ನಾನು ಈ ಸಾರಿ ನಿರಪರಾಧಿ ಫಿಲಿಷ್ಟಿಯರಿಗೆ ಕೇಡನ್ನು ಮಾಡುವ ಸರಿಯಾದ ಸಮಯವಿದು,” ಎಂದು ಹೇಳಿ, ಹೊರಟುಹೋಗಿ,</verse>
				<verse number="4">ಮುನ್ನೂರು ನರಿಗಳನ್ನು ಹಿಡಿದು, ಪಂಜುಗಳನ್ನು ತೆಗೆದುಕೊಂಡು ಬಂದು, ಬಾಲಕ್ಕೆ ಬಾಲ ಸೇರಿಸಿ, ಎರಡು ಬಾಲಗಳ ನಡುವೆ ಒಂದು ಪಂಜನ್ನು ಕಟ್ಟಿದನು.</verse>
				<verse number="5">ಬಾಲಗಳಿಗೆ ಬೆಂಕಿ ಹಚ್ಚಿ, ಅವುಗಳನ್ನು ಫಿಲಿಷ್ಟಿಯರ ಪೈರಿನಲ್ಲಿ ಕಳುಹಿಸಿಬಿಟ್ಟು, ತೆನೆ ಗೂಡುಗಳನ್ನೂ, ಪೈರುಗಳನ್ನೂ, ದ್ರಾಕ್ಷಿತೋಟಗಳನ್ನೂ, ಹಿಪ್ಪೆಯ ತೋಪುಗಳನ್ನೂ ಕೂಡ ಸುಟ್ಟುಬಿಟ್ಟನು.</verse>
				<verse number="6">ಫಿಲಿಷ್ಟಿಯರು, “ಇದನ್ನು ಮಾಡಿದವರು ಯಾರು?” ಎಂದರು. ಅದಕ್ಕೆ ಅವರು, “ತಿಮ್ನಾದವನ ಅಳಿಯನಾದ ಸಂಸೋನನು ಮಾಡಿದನು. ಏಕೆಂದರೆ ಇವನು ಅವನ ಹೆಂಡತಿಯನ್ನು ತೆಗೆದುಕೊಂಡು, ಅವನ ಜೊತೆಗಾರನಿಗೆ ಕೊಟ್ಟನು,” ಎಂದರು. ಆಗ ಫಿಲಿಷ್ಟಿಯರು ಬಂದು, ಅವಳನ್ನೂ, ಅವಳ ತಂದೆಯನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು.</verse>
				<verse number="7">ಸಂಸೋನನು ಅವರಿಗೆ, “ನೀವು ಈ ಪ್ರಕಾರ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿಗೆ ಮುಯ್ಯಿ ತೀರಿಸದೆ ಬಿಡುವುದಿಲ್ಲ,” ಎಂದನು.</verse>
				<verse number="8">ಅವರ ಮೇಲೆ ಬಲವಾಗಿ ಬಿದ್ದು, ಅವರಲ್ಲಿ ಅನೇಕರನ್ನು ಕೊಂದುಹಾಕಿ ತಾನು ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.</verse>
				<verse number="9">ಫಿಲಿಷ್ಟಿಯರು ಹೊರಟುಹೋಗಿ ಯೆಹೂದದಲ್ಲಿ ಇಳಿದು, ಲೇಹಿಯಲ್ಲಿ ವ್ಯಾಪಿಸಿದರು.</verse>
				<verse number="10">ಯೆಹೂದದಲ್ಲಿ ವಾಸಿಸುವ ಜನರು ಅವರಿಗೆ, “ನೀವು ನಮಗೆ ವಿರೋಧವಾಗಿ ಬಂದದ್ದೇನು?” ಎಂದರು. ಫಿಲಿಷ್ಟಿಯರು, “ಸಂಸೋನನು ನಮಗೆ ಮಾಡಿದ ಹಾಗೆ ನಾವು ಅವನಿಗೆ ಪ್ರತಿಯಾಗಿ ಮಾಡುವುದಕ್ಕೆ, ಅವನನ್ನು ಹಿಡಿದು ಕಟ್ಟುವುದಕ್ಕೆ ಬಂದೆವು,” ಎಂದರು.</verse>
				<verse number="11">ಆಗ ಯೆಹೂದದಲ್ಲಿ ಮೂರು ಸಾವಿರ ಜನರು ಏಟಾಮ್ ಬಂಡೆಯ ಮೇಲಕ್ಕೆ ಏರಿಹೋಗಿ, ಸಂಸೋನನಿಗೆ, “ಫಿಲಿಷ್ಟಿಯರು ನಮ್ಮನ್ನು ಆಳುತ್ತಾ ಇದ್ದಾರೆಂದು ನಿನಗೆ ಗೊತ್ತಿಲ್ಲವೋ? ನೀನು ನಮಗೆ ಹೀಗೆ ಏಕೆ ಮಾಡಿದೆ?” ಎಂದರು. ಅದಕ್ಕವನು, “ಅವರು ನನಗೆ ಮಾಡಿದ ಪ್ರಕಾರವೇ, ನಾನು ಅವರಿಗೆ ಮಾಡಿದೆನು,” ಎಂದು ಅವರಿಗೆ ಹೇಳಿದನು.</verse>
				<verse number="12">ಆಗ ಅವರು ಅವನಿಗೆ, “ನಾವು ನಿನ್ನನ್ನು ಕಟ್ಟಿ, ಫಿಲಿಷ್ಟಿಯರ ಕೈಗೆ ಒಪ್ಪಿಸಿಕೊಡಲು ಬಂದೆವು,” ಎಂದರು. ಸಂಸೋನನು ಅವರಿಗೆ, “ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ನನಗೆ ಆಣೆ ಇಡಿರಿ,” ಎಂದನು.</verse>
				<verse number="13">ಅದಕ್ಕವರು, “ಇಲ್ಲ; ಆದರೆ ನಿನ್ನನ್ನು ಭದ್ರವಾಗಿ ಕಟ್ಟಿ, ಅವರ ಕೈಯಲ್ಲಿ ಒಪ್ಪಿಸಿಕೊಡುವೆವು. ನಾವು ನಿನ್ನನ್ನು ನಿಜವಾಗಿ ಕೊಲ್ಲುವುದೇ ಇಲ್ಲ,” ಎಂದರು. ಎರಡು ಹೊಸ ಹಗ್ಗಗಳಿಂದ ಅವನನ್ನು ಕಟ್ಟಿ, ಬಂಡೆಯ ಮೇಲಿನಿಂದ ತಂದರು.</verse>
				<verse number="14">ಅವನು ಲೇಹಿಗೆ ಬಂದಾಗ, ಫಿಲಿಷ್ಟಿಯರು ಅವನ ಎದುರಾಗಿ ಆರ್ಭಟಿಸುತ್ತಾ ಬಂದರು. ಯೆಹೋವ ದೇವರ ಆತ್ಮ ಅವನ ಮೇಲೆ ಬಲವಾಗಿ ಬಂದದ್ದರಿಂದ, ಅವನ ತೋಳುಗಳಲ್ಲಿ ಕಟ್ಟಿದ್ದ ಸೆಣಬಿನ ಹಗ್ಗಗಳು ಬೆಂಕಿಯಲ್ಲಿ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಯಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.</verse>
				<verse number="15">ಅವನು ಒಂದು ಕತ್ತೆಯ ದವಡೆಯ ಹೊಸ ಎಲುಬನ್ನು ಕಂಡುಕೊಂಡು, ತನ್ನ ಕೈಯನ್ನು ಚಾಚಿ ತೆಗೆದುಕೊಂಡು, ಅದರಿಂದ ಸಾವಿರ ಜನರನ್ನು ವಧಿಸಿಬಿಟ್ಟನು.</verse>
				<verse number="16">ಆಗ ಸಂಸೋನನು ಹೇಳಿದ್ದೇನೆಂದರೆ, “ಕತ್ತೆಯ ದವಡೆಯಿಂದ ನಾನು ಅವರನ್ನು ಹೆಣಗಳನ್ನಾಗಿ ಮಾಡಿದ್ದೇನೆ. ಕತ್ತೆ ದವಡೆಯ ಎಲುಬಿನಿಂದ ಒಂದು ಸಾವಿರ ಜನರನ್ನು ಕೊಂದಿದ್ದೇನೆ.”</verse>
				<verse number="17">ಅವನು ಮಾತನಾಡಿ ತೀರಿಸಿದಾಗ, ತನ್ನ ಕೈಯಲ್ಲಿದ್ದ ದವಡೆಯ ಎಲುಬನ್ನು ಎಸೆದುಬಿಟ್ಟನು. ಆ ಸ್ಥಳಕ್ಕೆ ರಾಮತ್ ಲೇಹಿ ಎಂಬ ಹೆಸರಾಯಿತು.</verse>
				<verse number="18">ಅವನಿಗೆ ಬಹಳ ಬಾಯಾರಿಕೆಯಾದದರಿಂದ ಅವನು ಯೆಹೋವ ದೇವರಿಗೆ ಮೊರೆಯಿಟ್ಟನು, “ನಿಮ್ಮ ಸೇವಕನಿಗೆ ನೀವು ಈ ಮಹಾ ರಕ್ಷಣೆಯನ್ನು ಕೊಟ್ಟಿದ್ದೀರಿ. ಈಗ ಬಾಯಾರಿಕೆಯಿಂದ ಬಳಲಿ, ಸುನ್ನತಿಯಾಗದ ಈ ಜನರ ಕೈಯಲ್ಲಿ ನಾನು ಬೀಳಬೇಕೋ?” ಎಂದನು.</verse>
				<verse number="19">ಆಗ ದೇವರು ಲೇಹಿಯಲ್ಲಿ ಟೊಳ್ಳಾದ ಸ್ಥಳವನ್ನು ಸೀಳಿಬಿಟ್ಟರು. ಅದರೊಳಗಿಂದ ನೀರು ಹೊರಟು ಬಂತು. ಸಂಸೋನನು ಆ ನೀರನ್ನು ಕುಡಿದದ್ದರಿಂದ ಅವನ ಬಲ ತಿರುಗಿಬಂದು, ಅವನು ಚೇತರಿಸಿಕೊಂಡನು. ಆದ್ದರಿಂದ ಏನ್ ಹಕ್ಕೋರೇ ಎಂದು ಅದಕ್ಕೆ ಹೆಸರಾಯಿತು. ಈ ದಿವಸದವರೆಗೂ ಅದು ಲೇಹಿಯಲ್ಲಿ ಇದೆ.</verse>
				<verse number="20">ಸಂಸೋನನು ಫಿಲಿಷ್ಟಿಯರ ದಿವಸಗಳಲ್ಲಿ ಇಪ್ಪತ್ತು ವರ್ಷ ಇಸ್ರಾಯೇಲಿಗೆ ನ್ಯಾಯತೀರಿಸಿದನು.</verse>
			</chapter>
			<chapter number="16">
				<verse number="1">ಸಂಸೋನನು ಗಾಜಕ್ಕೆ ಹೋಗಿ, ಅಲ್ಲಿ ಒಬ್ಬ ಜಾರಸ್ತ್ರೀಯನ್ನು ಕಂಡು, ಅವಳ ಬಳಿಗೆ ಹೋದನು.</verse>
				<verse number="2">ಆಗ ಸಂಸೋನನು ಅಲ್ಲಿಗೆ ಬಂದಿದ್ದಾನೆಂದು ಗಾಜದವರಿಗೆ ತಿಳಿದಿದ್ದರಿಂದ, ಅವರು ಅವನನ್ನು ಸುತ್ತಿಕೊಂಡು, ಪಟ್ಟಣದ ಬಾಗಿಲಲ್ಲಿ ಅವನಿಗಾಗಿ ಹೊಂಚಿಕೊಂಡಿದ್ದು, ರಾತ್ರಿಯೆಲ್ಲಾ ಕಾದುಕೊಂಡಿದ್ದರು. ಅವರು, “ಹೊತ್ತಾರೆ ಬೆಳಕಾದಾಗ ಅವನನ್ನು ಕೊಂದು ಹಾಕುವೆವು,” ಎಂದರು.</verse>
				<verse number="3">ಸಂಸೋನನು ಅರ್ಧ ರಾತ್ರಿಯವರೆಗೆ ಮಲಗಿದ್ದು, ಮಧ್ಯರಾತ್ರಿಯಲ್ಲಿ ಎದ್ದು, ಪಟ್ಟಣದ ಬಾಗಿಲ ಕದಗಳನ್ನೂ, ಅದರ ಎರಡು ತೋಳುಗಳನ್ನೂ ಹಿಡಿದು, ಅಗುಳಿ ಸಹ ಕಿತ್ತು, ತನ್ನ ಹೆಗಲ ಮೇಲೆ ಹೊತ್ತುಕೊಂಡು ಹೋಗಿ, ಹೆಬ್ರೋನಿಗೆ ಎದುರಾಗಿರುವ ಪರ್ವತದ ಶಿಖರದ ಮೇಲಕ್ಕೆ ಹೋದನು.</verse>
				<verse number="4">ಇದರ ತರುವಾಯ, ಸೊರೇಕ್ ತಗ್ಗಿನಲ್ಲಿದ್ದ ದೆಲೀಲ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯನ್ನು ಪ್ರೀತಿಮಾಡಿದನು.</verse>
				<verse number="5">ಅವಳ ಬಳಿಗೆ ಫಿಲಿಷ್ಟಿಯರ ಅಧಿಪತಿಗಳು ಬಂದು ಅವಳಿಗೆ, “ನೀನು ಅವನನ್ನು ಮರಳುಗೊಳಿಸಿ, ನಾವು ಅವನನ್ನು ಯಾವ ಪ್ರಕಾರ ಗೆದ್ದು, ಕಟ್ಟಿ, ಬಾಧಿಸಬಹುದೆಂದೂ ಅವನ ದೊಡ್ಡ ಶಕ್ತಿ ಯಾವುದರಲ್ಲಿ ಇದೆ ಎಂದೂ ನೋಡು. ನಾವು ಒಬ್ಬೊಬ್ಬರು ನಿನಗೆ ಸಾವಿರದ ನೂರು ಬೆಳ್ಳಿಯ ನಾಣ್ಯಗಳನ್ನು ಕೊಡುವೆವು,” ಎಂದರು.</verse>
				<verse number="6">ಆಗ ದೆಲೀಲಳು ಸಂಸೋನನಿಗೆ, “ನಿನ್ನ ದೊಡ್ಡ ಶಕ್ತಿ ಯಾವುದರಲ್ಲಿ ಉಂಟೆಂದೂ ನಿನ್ನನ್ನು ಬಾಧಿಸುವುದಕ್ಕೆ ಹೇಗೆ ಕಟ್ಟಬಹುದೆಂದೂ ನನಗೆ ದಯಮಾಡಿ ತಿಳಿಸು,” ಎಂದಳು.</verse>
				<verse number="7">ಸಂಸೋನನು ಅವಳಿಗೆ, “ಅವರು ನನ್ನನ್ನು ಒಣಗದೆ ಇರುವ ಹಸುರಾದ ಏಳು ನಾರಿನ ಬರಲುಗಳಿಂದ ಕಟ್ಟಿದರೆ, ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದನು.</verse>
				<verse number="8">ಆಗ ಫಿಲಿಷ್ಟಿಯರ ಅಧಿಪತಿಗಳು ಒಣಗದೆ ಇರುವ ಹಸಿಯಾದ ಏಳು ನಾರಿನ ಬರಲುಗಳನ್ನು ಅವಳಿಗೆ ಕೊಟ್ಟರು. ಅವಳು ಅವನನ್ನು ಅವುಗಳಿಂದ ಬಂಧಿಸಿದಳು.</verse>
				<verse number="9">ಹೊಂಚುಗಾರರು ಅವಳಿಗೋಸ್ಕರ ಕೊಠಡಿಯಲ್ಲಿದ್ದರು. ಅವಳು ಅವನಿಗೆ, “ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬರುತ್ತಾರೆ,” ಎಂದಳು. ಆಗ ಅವನು ಬೆಂಕಿ ತಗುಲಿದ ಸೆಣಬಿನ ದಾರ ಹರಿದು ಹೋಗುವ ಹಾಗೆಯೇ ನಾರಿನ ಬರಲುಗಳನ್ನು ಹರಿದುಬಿಟ್ಟನು. ಹೀಗೆ ಅವನ ಶಕ್ತಿಯ ರಹಸ್ಯ ತಿಳಿಯದೆ ಹೋಯಿತು.</verse>
				<verse number="10">ಆಗ ದೆಲೀಲಳು ಸಂಸೋನನಿಗೆ, “ನೀನು ನನ್ನನ್ನು ವಂಚನೆಮಾಡಿ, ನನಗೆ ಸುಳ್ಳು ಹೇಳಿದೆ. ಈಗ ನಿನ್ನನ್ನು ಯಾವುದರಿಂದ ಕಟ್ಟಬಹುದೆಂಬುದನ್ನು ನನಗೆ ದಯಮಾಡಿ ತಿಳಿಸು,” ಎಂದಳು.</verse>
				<verse number="11">ಸಂಸೋನನು ಅವಳಿಗೆ, “ಯಾವ ಕೆಲಸಕ್ಕೆ ಬಳಸದೆ ಇರುವ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ, ನಾನು ಬಲಹೀನನಾಗಿ, ಬೇರೆ ಮನುಷ್ಯನಂತಾಗುವೆನು,” ಎಂದನು.</verse>
				<verse number="12">ಆಗ ದೆಲೀಲಳು ಹೊಸ ಹಗ್ಗಗಳನ್ನು ತೆಗೆದುಕೊಂಡು, ಅವುಗಳಿಂದ ಅವನನ್ನು ಕಟ್ಟಿ, ಅವನಿಗೆ, “ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬಂದಿದ್ದಾರೆ,” ಎಂದಳು. ಹೊಂಚುಗಾರರು ಕೊಠಡಿಯಲ್ಲಿದ್ದರು. ಆದರೆ ಅವನು ತನ್ನ ತೋಳುಗಳಲ್ಲಿ ಇರುವವುಗಳನ್ನು ದಾರದ ಹಾಗೆಯೇ ಹರಿದುಬಿಟ್ಟನು.</verse>
				<verse number="13">ದೆಲೀಲಳು ಸಂಸೋನನಿಗೆ, “ಈವರೆಗೂ ನನ್ನನ್ನು ವಂಚನೆಮಾಡಿ, ನನಗೆ ಸುಳ್ಳುಗಳನ್ನು ಹೇಳಿದೆ. ನಿನ್ನನ್ನು ಯಾವುದರಿಂದ ಕಟ್ಟಬಹುದೋ ತಿಳಿಸು,” ಎಂದಳು. ಅವನು ಅವಳಿಗೆ, “ನೀನು ನನ್ನ ತಲೆಯ ಏಳು ಜಡೆಗಳನ್ನು ಮಗ್ಗದಲ್ಲಿ ನೇಯ್ದರೆ ಆಗುವುದು,” ಎಂದನು.</verse>
				<verse number="14">ಸಂಸೋನನು ಮಲಗಿರುವಾಗ ದೆಲೀಲಳು ಅವನ ತಲೆಗೂದಲಿನ ಏಳು ಜಡೆಗಳನ್ನು ಆಗ ಅವುಗಳನ್ನು ಗೂಟದಿಂದ ಭದ್ರಮಾಡಿ, ಅವನಿಗೆ, “ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬಂದಿದ್ದಾರೆ,” ಎಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು ಎದ್ದು, ಮಗ್ಗದ ಗೂಟವನ್ನೂ ಮಗ್ಗವನ್ನೂ ತೆಗೆದುಕೊಂಡು ಹೋದನು.</verse>
				<verse number="15">ಅವಳು ಅವನಿಗೆ, “ನಿನ್ನ ಹೃದಯವು ನನ್ನ ಸಂಗಡ ಇಲ್ಲದೆ ಇರುವಾಗ, ನಿನ್ನನ್ನು ಪ್ರೀತಿಮಾಡುತ್ತೇನೆ ಎಂದು ನೀನು ಹೇಗೆ ಹೇಳುತ್ತೀ? ನೀನು ಈ ಮೂರು ಸಾರಿ ನನಗೆ ವಂಚನೆ ಮಾಡಿದೆ; ನಿನ್ನ ದೊಡ್ಡ ಶಕ್ತಿಯ ರಹಸ್ಯ ಯಾವುದರಲ್ಲಿ ಉಂಟೋ ನನಗೆ ತಿಳಿಸಲಿಲ್ಲ,” ಎಂದಳು.</verse>
				<verse number="16">ಅವಳು ಅವನನ್ನು ದಿನದಿನವೂ ತನ್ನ ಮಾತುಗಳಿಂದ ಪೀಡಿಸಿ, ತೊಂದರೆ ಪಡಿಸಿದ್ದರಿಂದ, ಅವನ ಪ್ರಾಣವು ಸಾಯುವಷ್ಟು ವ್ಯಸನಪಟ್ಟಿತು.</verse>
				<verse number="17">ಅವನು ತನ್ನ ಹೃದಯವನ್ನೆಲ್ಲಾ ಅವಳಿಗೆ ತಿಳಿಸಿ, ಅವಳಿಗೆ, “ಕ್ಷೌರದ ಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ಏಕೆಂದರೆ ನಾನು ನನ್ನ ತಾಯಿಯ ಗರ್ಭದಲ್ಲಿಂದ ದೇವರಿಗೆ ಪ್ರತಿಷ್ಠಿತನಾದ ನಾಜೀರನಾಗಿದ್ದೇನೆ. ನನ್ನ ತಲೆಯನ್ನು ಬೋಳಿಸಿದರೆ, ನನ್ನ ಶಕ್ತಿಯು ನನ್ನನ್ನು ಬಿಟ್ಟು ಹೋಗುವುದು; ನಾನು ಬಲಹೀನನಾಗಿ ಎಲ್ಲಾ ಮನುಷ್ಯರ ಹಾಗೆ ಇರುವೆನು,” ಎಂದನು.</verse>
				<verse number="18">ಆಗ ದೆಲೀಲಳು, ಅವನು ತನಗೆ ತನ್ನ ಹೃದಯಲ್ಲಿರುವುದನ್ನೆಲ್ಲಾ ತಿಳಿಸಿದ್ದಾನೆಂದು ಕಂಡು, ಅವಳು ಫಿಲಿಷ್ಟಿಯರ ಅಧಿಪತಿಗಳಿಗೆ, “ನೀವು ಈ ಸಾರಿ ಬನ್ನಿರಿ. ಏಕೆಂದರೆ ಅವನು ತನ್ನ ಹೃದಯದಲ್ಲಿರುವುದನ್ನೆಲ್ಲಾ ನನಗೆ ತಿಳಿಸಿದನು,” ಎಂದು ಕರೆಕಳುಹಿಸಿದಳು. ಆಗ ಫಿಲಿಷ್ಟಿಯರ ಅಧಿಪತಿಗಳು ಅವಳ ಬಳಿಗೆ ಹಣವನ್ನು ತಮ್ಮ ಕೈಯಲ್ಲಿ ತೆಗೆದುಕೊಂಡು ಬಂದರು.</verse>
				<verse number="19">ಅವಳು ಅವನನ್ನು ತನ್ನ ತೊಡೆಗಳ ಮೇಲೆ ನಿದ್ರೆ ಹೋಗುವಂತೆ ಮಾಡಿ, ಒಬ್ಬನನ್ನು ಕರೆದು, ಅವನ ತಲೆಯ ಏಳು ಜಡೆಗಳನ್ನು ಬೋಳಿಸುವಂತೆ ಮಾಡಿ, ಅವನನ್ನು ದುರ್ಬಲಪಡಿಸಿದಳು. ಆಗ ಅವನ ಶಕ್ತಿ ಅವನನ್ನು ಬಿಟ್ಟುಹೋಯಿತು.</verse>
				<verse number="20">ಅವಳು, “ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬಂದಿದ್ದಾರೆ,” ಎಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು, “ಮೊದಲಿನಂತೆಯೇ ನಾನು ಹೊರಗೆ ಹೋಗಿ ಬಿಡುಗಡೆಯಾಗುವೆನು,” ಎಂದುಕೊಂಡನು. ಆದರೆ ಯೆಹೋವ ದೇವರು ತನ್ನನ್ನು ಬಿಟ್ಟು ಹೋಗಿದ್ದಾರೆಂದು ಅವನು ಅರಿಯಲಿಲ್ಲ.</verse>
				<verse number="21">ಆದರೆ ಫಿಲಿಷ್ಟಿಯರು ಅವನನ್ನು ಹಿಡಿದು, ಅವನ ಕಣ್ಣುಗಳನ್ನು ಕಿತ್ತು, ಅವನನ್ನು ಗಾಜಕ್ಕೆ ಒಯ್ದು ಎರಡು ಕಂಚಿನ ಸಂಕೋಲೆಗಳನ್ನು ಹಾಕಿದರು. ಸೆರೆಮನೆಯಲ್ಲಿ ಅವನನ್ನು ಬೀಸುವುದಕ್ಕೆ ಹಚ್ಚಿದರು.</verse>
				<verse number="22">ಆದರೆ ಕ್ಷೌರ ಮಾಡಿದ ತರುವಾಯ ಅವನ ತಲೆಯ ಕೂದಲು ತಿರುಗಿ ಬೆಳೆಯಲಾರಂಭಿಸಿತು.</verse>
				<verse number="23">ಫಿಲಿಷ್ಟಿಯರ ಅಧಿಪತಿಗಳು ತಮ್ಮ ದೇವರಾದ ದಾಗೋನನಿಗೆ ದೊಡ್ಡ ಬಲಿಯನ್ನು ಅರ್ಪಿಸುವುದಕ್ಕೂ ಸಂತೋಷಪಡುವುದಕ್ಕೂ ಕೂಡಿಬಂದರು. “ನಮ್ಮ ದೇವರು ನಮ್ಮ ಶತ್ರುವಾದ ಸಂಸೋನನನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟನು,” ಎಂದು ಅವರು ಹೇಳಿಕೊಂಡರು.</verse>
				<verse number="24">ಜನರು ಸಂಸೋನನನ್ನು ನೋಡಿದಾಗ ತಮ್ಮ ದೇವರನ್ನು ಹೊಗಳಿದರು. ಏಕೆಂದರೆ, “ನಮ್ಮ ದೇಶವನ್ನು ಹಾಳು ಮಾಡಿ, ನಮ್ಮಲ್ಲಿ ಅನೇಕರನ್ನು ಕೊಂದ ನಮ್ಮ ವೈರಿಯನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟನು,” ಎಂದು ಅವರು ಹೇಳಿಕೊಂಡರು.</verse>
				<verse number="25">ಅಲ್ಲಿ ಅವರು ಸಂಭ್ರಮವಾಗಿರುವಾಗ, “ನಮ್ಮ ಮುಂದೆ ಮನೋರಂಜನೆಗಾಗಿ ಸಂಸೋನನನ್ನು ಕರೆದುಕೊಂಡು ಬನ್ನಿರಿ,” ಎಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರೆತಂದಾಗ, ಅವನು ಅವರ ಮುಂದೆ ವಿನೋದ ಮಾಡಬೇಕಾಯಿತು. ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು.</verse>
				<verse number="26">ಆದರೆ ಸಂಸೋನನು ತನ್ನ ಕೈಹಿಡಿದ ಹುಡುಗನಿಗೆ, “ಈ ಕಟ್ಟಡದ ಆಧಾರ ಸ್ತಂಭಗಳನ್ನು ನಾನು ಸ್ಪರ್ಶಿಸಿ, ಅವುಗಳ ಮೇಲೆ ಆತುಕೊಳ್ಳುವ ಹಾಗೆ ನನ್ನನ್ನು ಬಿಡು,” ಎಂದನು.</verse>
				<verse number="27">ಆ ಮನೆಯು ಸ್ತ್ರೀಪುರುಷರಿಂದ ತುಂಬಿತ್ತು. ಅಲ್ಲಿ ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಇದ್ದರು. ಇದಲ್ಲದೆ ಸಂಸೋನನು ವಿನೋದ ಮಾಡುವುದನ್ನು ಕಾಣುವುದಕ್ಕೆ ಮಾಳಿಗೆಯ ಮೇಲೆ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಸ್ತ್ರೀ ಪುರುಷರಿದ್ದರು.</verse>
				<verse number="28">ಆಗ ಸಂಸೋನನು ಯೆಹೋವ ದೇವರನ್ನು ಕೂಗಿ, “ಸಾರ್ವಭೌಮ ಯೆಹೋವ ದೇವರೇ, ನಾನು ನನ್ನ ಎರಡು ಕಣ್ಣುಗಳಿಗಾಗಿ ಒಂದೇ ಸಾರಿ ಫಿಲಿಷ್ಟಿಯರಿಗೆ ಮುಯ್ಯಿಗೆ ಮುಯ್ಯಿ ಮಾಡುವ ಹಾಗೆ ಈ ಸಾರಿ ಮಾತ್ರ ನನ್ನನ್ನು ನೆನಸಿ ಬಲಪಡಿಸಿ ದೇವರೇ,”</verse>
				<verse number="29">ಎಂದು ಹೇಳಿ ಸಂಸೋನನು ಆ ಕಟ್ಟಡ ನಿಲ್ಲುವುದಕ್ಕೆ ಆಧಾರವಾದ ಎರಡು ನಡುವಿನ ಸ್ತಂಭಗಳನ್ನು ಒಂದನ್ನು ತನ್ನ ಬಲಗೈಯಿಂದ ಮತ್ತೊಂದನ್ನು ತನ್ನ ಎಡಗೈಯಿಂದ ಹಿಡಿದುಕೊಂಡು,</verse>
				<verse number="30">“ನನ್ನ ಪ್ರಾಣವು ಫಿಲಿಷ್ಟಿಯರ ಸಂಗಡ ಸಾಯಲಿ,” ಎಂದು ಹೇಳಿ ತನ್ನ ಶಕ್ತಿಯಿದ್ದ ಮಟ್ಟಿಗೂ ಬಾಗಿದನು. ಆಗ ಮನೆಯು ಅಧಿಪತಿಗಳ ಮೇಲೆಯೂ, ಅದರಲ್ಲಿದ್ದ ಎಲ್ಲಾ ಜನರ ಮೇಲೆಯೂ ಬಿತ್ತು. ಹೀಗೆ ಸಂಸೋನನು ಬದುಕಿದ್ದಾಗ ಕೊಂದ ಜನರಿಗಿಂತಲೂ ಮರಣಹೊಂದುವಾಗ ಕೊಂದ ಜನರ ಸಂಖ್ಯೆಯೇ ಹೆಚ್ಚಾಗಿತ್ತು.</verse>
				<verse number="31">ಅವನ ಸಹೋದರರೂ, ಅವನ ತಂದೆಯ ಮನೆಯವರೆಲ್ಲರೂ ಹೋಗಿ ಅವನನ್ನು ತೆಗೆದುಕೊಂಡು ಬಂದು, ಚೊರ್ಗಕ್ಕೂ, ಎಷ್ಟಾವೋಲಿಗೂ ನಡುವೆ ಅವನ ತಂದೆ ಮಾನೋಹನ ಸಮಾಧಿಯಲ್ಲಿ ಅವನನ್ನು ಹೂಳಿಟ್ಟರು. ಅವನು ಇಸ್ರಾಯೇಲಿಗೆ ಇಪ್ಪತ್ತು ವರ್ಷ ನ್ಯಾಯತೀರಿಸಿದನು.</verse>
			</chapter>
			<chapter number="17">
				<verse number="1">ಎಫ್ರಾಯೀಮ್ ಬೆಟ್ಟದ ಪ್ರಾಂತದಲ್ಲಿ ಮೀಕ ಎಂಬ ಹೆಸರುಳ್ಳ ಒಬ್ಬ ಮನುಷ್ಯನು ಇದ್ದನು.</verse>
				<verse number="2">ಅವನು ತನ್ನ ತಾಯಿಗೆ, “ನಿನ್ನ ಬಳಿಯಿಂದ ಸಾವಿರದ ನೂರು ಬೆಳ್ಳಿ ನಾಣ್ಯಗಳು ಕಳುವಾದಾಗ, ನೀನು ಆ ಹಣವನ್ನು ಕುರಿತು ಶಪಿಸಿದೆಯಲ್ಲಾ? ಇಗೋ, ಆ ನಾಣ್ಯಗಳು ನನ್ನ ಬಳಿಯಲ್ಲಿ ಇವೆ. ನಾನೇ ಅದನ್ನು ತೆಗೆದುಕೊಂಡೆನು,” ಎಂದನು. ಅದಕ್ಕೆ ಅವನ ತಾಯಿ, “ನನ್ನ ಮಗನೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,” ಎಂದಳು.</verse>
				<verse number="3">ಅವನು ಆ ಸಾವಿರದ ನೂರು ಬೆಳ್ಳಿಯ ನಾಣ್ಯಗಳನ್ನು ತನ್ನ ತಾಯಿಗೆ ತಿರುಗಿ ಕೊಟ್ಟಾಗ, ಅವನ ತಾಯಿ, “ನನ್ನ ಮಗನ ನಿಮಿತ್ತ ಕೆತ್ತಿದ ವಿಗ್ರಹವನ್ನೂ, ಎರಕದ ವಿಗ್ರಹವನ್ನೂ ಮಾಡುವುದಕ್ಕೆ ನಾನು ನನ್ನ ಕೈಯಲ್ಲಿದ್ದ ಈ ಬೆಳ್ಳಿಯನ್ನು ಯೆಹೋವ ದೇವರಿಗೆ ಸಂಪೂರ್ಣವಾಗಿ ಪ್ರತಿಷ್ಠಿಸಿದ್ದೆನು; ಆದ್ದರಿಂದ ನಾನು ಅದನ್ನು ನಿನಗೆ ತಿರುಗಿ ಕೊಡುವೆನು,” ಎಂದಳು.</verse>
				<verse number="4">ಆದರೆ ಅವನು ಆ ಹಣವನ್ನು ತನ್ನ ತಾಯಿಗೆ ತಿರುಗಿ ಕೊಟ್ಟನು. ಆಗ ಅವನ ತಾಯಿ ಇನ್ನೂರು ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು ಅಕ್ಕಸಾಲಿಗನ ಕೈಯಲ್ಲಿ ಕೊಟ್ಟಳು. ಅವನು ಅವುಗಳಿಂದ ಕೆತ್ತಿದ ವಿಗ್ರಹವನ್ನೂ, ಎರಕದ ವಿಗ್ರಹವನ್ನೂ ಮಾಡಿದನು. ಅವು ಮೀಕನ ಮನೆಯಲ್ಲಿದ್ದವು.</verse>
				<verse number="5">ಈ ಮೀಕ ಎಂಬವನಿಗೆ ದೇವರ ಮನೆ ಇದ್ದುದರಿಂದ ಅವನು ಒಂದು ಏಫೋದನ್ನೂ, ಪ್ರತಿಮೆಗಳನ್ನೂ ಮಾಡಿ, ತನ್ನ ಪುತ್ರರಲ್ಲಿ ಒಬ್ಬನನ್ನು ಯಾಜಕ ಸೇವೆಗೆ ಪ್ರತಿಷ್ಠೆ ಮಾಡಿದನು.</verse>
				<verse number="6">ಆ ದಿವಸಗಳಲ್ಲಿ ಇಸ್ರಾಯೇಲಿನಲ್ಲಿ ಅರಸನು ಇರಲಿಲ್ಲ. ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡುತ್ತಿದ್ದನು.</verse>
				<verse number="7">ಯೆಹೂದದ ಬೇತ್ಲೆಹೇಮಿನವನಾದ ಯೆಹೂದದ ಗೋತ್ರದ ಲೇವಿಯನಾದಂಥ ಒಬ್ಬ ಪ್ರಾಯದವನಿದ್ದನು. ಅವನು ಅಲ್ಲಿ ಪ್ರವಾಸಿಯಾಗಿದ್ದನು.</verse>
				<verse number="8">ಆ ಮನುಷ್ಯನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗುವುದಕ್ಕೆ ಯೆಹೂದದ ಬೇತ್ಲೆಹೇಮ್ ಪಟ್ಟಣವನ್ನು ಬಿಟ್ಟುಹೋದನು. ಪ್ರಯಾಣ ಮಾಡುವಾಗ ಎಫ್ರಾಯೀಮ್ ಬೆಟ್ಟದಲ್ಲಿರುವ ಮೀಕನ ಮನೆಯ ಬಳಿಗೆ ಬಂದನು.</verse>
				<verse number="9">ಆಗ ಮೀಕನು ಅವನಿಗೆ, “ನೀನು ಎಲ್ಲಿಂದ ಬಂದೆ?” ಎಂದನು. ಅವನು ಮೀಕನಿಗೆ, “ನಾನು ಯೆಹೂದದ ಬೇತ್ಲೆಹೇಮಿನವನಾದ ಲೇವಿಯನು. ನನಗೆ ಸ್ಥಳ ಸಿಕ್ಕಲ್ಲಿ ಪ್ರವಾಸಿಯಾಗಬೇಕೆಂದು ಹೊರಟಿದ್ದೇನೆ,” ಎಂದನು.</verse>
				<verse number="10">ಮೀಕನು ಅವನಿಗೆ, “ನೀನು ನನ್ನ ಬಳಿಯಲ್ಲಿ ವಾಸಮಾಡಿ ನನಗೆ ತಂದೆಯಾಗಿಯೂ, ಯಾಜಕನಾಗಿಯೂ ಇರು. ನಾನು ನಿನಗೆ ವರುಷಕ್ಕೆ ಹತ್ತು ಬೆಳ್ಳಿಯ ನಾಣ್ಯಗಳನ್ನೂ, ಒಂದು ದುಸ್ತು ವಸ್ತ್ರಗಳನ್ನೂ, ಆಹಾರವನ್ನೂ ಕೊಡುವೆನು,” ಎಂದನು. ಹಾಗೆಯೇ ಲೇವಿಯನು ಹೋದನು.</verse>
				<verse number="11">ಲೇವಿಯು ಆ ಮನುಷ್ಯನ ಬಳಿಯಲ್ಲಿ ವಾಸವಾಗಿರುವುದಕ್ಕೆ ಸಮ್ಮತಿಸಿದನು. ಆ ಯೌವನಸ್ಥನು ಅವನಿಗೆ ಅವನ ಪುತ್ರರಲ್ಲಿ ಒಬ್ಬನ ಹಾಗೆ ಇದ್ದನು.</verse>
				<verse number="12">ಮೀಕನು ಲೇವಿಯನನ್ನು ಪ್ರತಿಷ್ಠೆ ಮಾಡಿದನು. ಆ ಯೌವನಸ್ಥನು ಅವನಿಗೆ ಯಾಜಕನಾದನು. ಅವನು ಮೀಕನ ಮನೆಯಲ್ಲಿ ಇದ್ದನು.</verse>
				<verse number="13">ಆಗ ಮೀಕನು, “ನನಗೆ ಒಬ್ಬ ಲೇವಿಯನು ಯಾಜಕನಾಗಿರುವುದರಿಂದ, ಯೆಹೋವ ದೇವರು ನನಗೆ ಒಳ್ಳೆಯದನ್ನು ಮಾಡುವರೆಂದು ಈಗ ತಿಳಿಯುತ್ತೇನೆ,” ಎಂದುಕೊಂಡನು.</verse>
			</chapter>
			<chapter number="18">
				<verse number="1">ಆ ದಿವಸಗಳಲ್ಲಿ ಇಸ್ರಾಯೇಲಿನೊಳಗೆ ಅರಸನಿರಲಿಲ್ಲ. ಆ ದಿವಸಗಳಲ್ಲಿ ದಾನನ ಗೋತ್ರದವರು ವಾಸವಾಗಿರುವುದಕ್ಕೆ ತಮಗೆ ಬಾಧ್ಯತೆಯನ್ನು ಹುಡುಕುತ್ತಿದ್ದರು. ಏಕೆಂದರೆ ಅಂದಿನವರೆಗೆ ಅವರಿಗೆ ಇಸ್ರಾಯೇಲ್ ಗೋತ್ರಗಳಲ್ಲಿ ಪೂರ್ಣವಾಗಿ ಬಾಧ್ಯತೆ ದೊರೆತಿರಲಿಲ್ಲ.</verse>
				<verse number="2">ದಾನರು ದೇಶವನ್ನು ಸಂಚರಿಸಿ ನೋಡಿ, ಪರಿಶೋಧಿಸುವುದಕ್ಕಾಗಿ ತಮ್ಮ ಮೇರೆಗಳಲ್ಲಿರುವ ಚೊರ್ಗದಿಂದಲೂ, ಎಷ್ಟಾವೋಲಿನಿಂದಲೂ ತಮ್ಮ ಕುಟುಂಬದಲ್ಲಿ ಪರಾಕ್ರಮಶಾಲಿಗಳಾದ ಐದು ಮಂದಿಯನ್ನು ಕರೆದು, ಅವರ ಸಂಗಡ, “ನೀವು ಹೋಗಿ ದೇಶವನ್ನು ಸಂಚರಿಸಿ ನೋಡಿರಿ,” ಎಂದು ಹೇಳಿ ಕಳುಹಿಸಿದರು. ಹಾಗೆಯೇ ಇವರು ಎಫ್ರಾಯೀಮ್ ಬೆಟ್ಟದಲ್ಲಿರುವ ಮೀಕನ ಮನೆಯ ಬಳಿಗೆ ಬಂದು ಅಲ್ಲಿ ಇಳಿದುಕೊಂಡರು.</verse>
				<verse number="3">ಅವರು ಮೀಕನ ಮನೆಯ ಬಳಿಯಲ್ಲಿರುವಾಗ, ಲೇವಿಯ ಯುವಕನ ಸ್ವರ ಗುರುತಿಸಿ, ಅವನ ಬಳಿಗೆ ಹೋಗಿ, “ನಿನ್ನನ್ನು ಇಲ್ಲಿಗೆ ಕರೆದುಕೊಂಡು ಬಂದವನು ಯಾರು? ಇಲ್ಲಿ ನೀನು ಏನು ಮಾಡುತ್ತೀ? ಏಕೆ ನೀನು ಇಲ್ಲಿರುವೆ?” ಎಂದರು.</verse>
				<verse number="4">ಅವನು ಅವರಿಗೆ, “ಮೀಕನು ನನಗೆ ಹೀಗೆ ನಡೆಸುತ್ತಾ, ನನ್ನನ್ನು ಸಂಬಳಕ್ಕೆ ಇಟ್ಟುಕೊಂಡಿದ್ದಾನೆ. ನಾನು ಅವನಿಗೆ ಯಾಜಕನಾಗಿದ್ದೇನೆ,” ಎಂದನು.</verse>
				<verse number="5">ಆಗ ಅವರು ಅವನಿಗೆ, “ನಾವು ಹೋಗುವ ನಮ್ಮ ಮಾರ್ಗವು ಸಫಲವಾಗುವುದೋ? ಎಂದು ತಿಳಿಯುವ ಹಾಗೆ ದಯಮಾಡಿ ದೇವರನ್ನು ಕೇಳು,” ಎಂದರು.</verse>
				<verse number="6">ಆ ಯಾಜಕನು, “ಸಮಾಧಾನವಾಗಿ ಹೋಗಿರಿ. ನೀವು ಹೋಗುವ ನಿಮ್ಮ ಮಾರ್ಗಕ್ಕೆ ಯೆಹೋವ ದೇವರ ಒಪ್ಪಿಗೆ ಇದೆ,” ಎಂದನು.</verse>
				<verse number="7">ಆಗ ಆ ಐದು ಮಂದಿಯು ಹೊರಟು ಲಯಿಷಿಗೆ ಹೋಗಿ, ಅದರಲ್ಲಿ ವಾಸಿಸಿರುವ ಆ ಜನರನ್ನು ನೋಡುವಾಗ, ಅವರು ನಿರ್ಭೀತರಾಗಿಯೂ, ಸೀದೋನ್ಯರ ಹಾಗೆ ನೆಮ್ಮದಿಯಾಗಿಯೂ, ಸುರಕ್ಷಿತವಾಗಿಯೂ ಇದ್ದರು. ಅವರಿಗೆ ಯಾವ ಕೊರತೆಯು ಇರಲಿಲ್ಲ. ಅವರು ಸಮೃದ್ಧಿಯಲ್ಲಿದ್ದರು. ಸೀದೋನ್ಯರಿಂದ ದೂರವಾಗಿ ಜೀವಿಸುತ್ತಿದ್ದರು. ಬೇರೆ ಯಾರೊಂದಿಗೂ ಸಂಬಂಧವನ್ನು ಬೆಳೆಸಿರಲಿಲ್ಲ.</verse>
				<verse number="8">ಅವರು ಚೊರ್ಗದಲ್ಲಿಯೂ, ಎಷ್ಟಾವೋಲಿನಲ್ಲಿಯೂ ಇರುವ ಸಹೋದರರ ಬಳಿಗೆ ತಿರುಗಿ ಬಂದರು. ಅವರ ಸಹೋದರರಾದ ದಾನರು ಅವರಿಗೆ, “ನೀವು ಯಾವ ವರ್ತಮಾನ ತಂದಿದ್ದೀರಿ?” ಎಂದರು.</verse>
				<verse number="9">ಅದಕ್ಕವರು, “ನಾವು ಅವರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೋಗುವಹಾಗೆ ಏಳಿರಿ; ಏಕೆಂದರೆ ನಾವು ಆ ದೇಶವನ್ನು ನೋಡಿದೆವು; ಅದು ಬಹಳ ಚೆನ್ನಾಗಿದೆ. ನೀವು ಏನನ್ನಾದರೂ ಮಾಡಲು ಹೋಗುತ್ತೀರಾ? ಆ ದೇಶದಲ್ಲಿ ಪ್ರವೇಶಿಸಿ, ಅದನ್ನು ಸ್ವಾಧೀನಮಾಡಿಕೊಳ್ಳಲು ಹೋಗುವುದಕ್ಕೆ ತಡಮಾಡಬೇಡಿರಿ.</verse>
				<verse number="10">ನೀವು ಅಲ್ಲಿಗೆ ತಲುಪಿದಾಗ, ಸಂಶಯಪಡದ ಜನರನ್ನು ಅಲ್ಲಿ ಕಾಣುವಿರಿ. ಅದು ವಿಸ್ತಾರವಾದ ದೇಶವಾಗಿದೆ. ದೇವರು ಅದನ್ನು ನಿಮ್ಮ ಕೈಗಳಲ್ಲಿ ಒಪ್ಪಿಸಿಕೊಟ್ಟಿದ್ದಾರೆ. ಆ ಪ್ರದೇಶದಲ್ಲಿ ಯಾವ ಕೊರತೆಯು ಇರುವುದಿಲ್ಲ,” ಎಂದರು.</verse>
				<verse number="11">ಆಗ ಚೊರ್ಗದಲ್ಲಿಯೂ, ಎಷ್ಟಾವೋಲಿನಲ್ಲಿಯೂ ಇರುವ ದಾನನ ಗೋತ್ರದವರಲ್ಲಿ ಆರುನೂರು ಜನರು ಯುದ್ಧಕ್ಕೆ ತಕ್ಕ ಆಯುಧಗಳನ್ನು ಕಟ್ಟಿಕೊಂಡು, ಅಲ್ಲಿಂದ ಹೊರಟುಹೋಗಿ,</verse>
				<verse number="12">ಯೆಹೂದದಲ್ಲಿರುವ ಕಿರ್ಯತ್ ಯಾರೀಮಿನಲ್ಲಿ ಇಳಿದುಕೊಂಡರು. ಆ ಸ್ಥಳಕ್ಕೆ ಈ ದಿನದವರೆಗೂ ಮಹನೇ ದಾನ್ ಎಂಬ ಹೆಸರಿದೆ.</verse>
				<verse number="13">ಅದು ಕಿರ್ಯತ್ ಯಾರೀಮಿನ ಹಿಂದೆ ಇರುವುದು. ಅಲ್ಲಿಂದ ಅವರು ಎಫ್ರಾಯೀಮ್ ಬೆಟ್ಟಕ್ಕೆ ಹೋಗಿ, ಮೀಕನ ಮನೆಯವರೆಗೆ ಬಂದರು.</verse>
				<verse number="14">ಆಗ ಲಯಿಷಿನ ದೇಶವನ್ನು ಸಂಚರಿಸಿ ನೋಡಿ ಬಂದ ಆ ಐದು ಮಂದಿ ಜನರು ತಮ್ಮ ಸಹೋದರರಿಗೆ ಉತ್ತರಕೊಟ್ಟು, “ಈ ಮನೆಗಳಲ್ಲಿ ಏಫೋದೂ, ಪ್ರತಿಮೆಗಳೂ, ಕೆತ್ತಿದ ವಿಗ್ರಹವೂ, ಎರಕದ ವಿಗ್ರಹವೂ ಉಂಟೆಂದು ನಿಮಗೆ ಗೊತ್ತುಂಟೋ? ನೀವು ಈಗ ಮಾಡಬೇಕಾದದ್ದೇನೆಂದು ತಿಳಿದುಕೊಳ್ಳಿರಿ,” ಎಂದರು.</verse>
				<verse number="15">ಅವರು ಅಲ್ಲಿಗೆ ಹೋಗಿ ಮೀಕನ ಮನೆಯಲ್ಲಿರುವ ಯುವಕನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸತೊಡಗಿದರು.</verse>
				<verse number="16">ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ದಾನನ ಗೋತ್ರದವರಾದ ಆರುನೂರು ಮಂದಿಯು ಬಾಗಿಲ ಬಳಿಯಲ್ಲಿ ನಿಂತರು.</verse>
				<verse number="17">ಆದರೆ ದೇಶವನ್ನು ಸಂಚರಿಸಿ ನೋಡಿ ಬಂದ ಆ ಐದು ಮಂದಿ ಒಳಗೆ ಹೋಗಿ, ಕೆತ್ತಿದ ವಿಗ್ರಹವನ್ನೂ, ಏಫೋದನ್ನೂ, ಪ್ರತಿಮೆಗಳನ್ನೂ, ಎರಕದ ವಿಗ್ರಹವನ್ನೂ ತೆಗೆದುಕೊಂಡರು. ಆಗ ಯಾಜಕನೂ, ಯುದ್ಧದ ಆಯುಧಗಳನ್ನು ಕಟ್ಟಿಕೊಂಡ ಆರುನೂರು ಜನರೂ ಬಾಗಿಲ ಬಳಿಯಲ್ಲಿ ನಿಂತಿದ್ದರು.</verse>
				<verse number="18">ಅವರು ಮೀಕನ ಮನೆಗೆ ಬಂದು, ಏಫೋದನ್ನೂ, ಪ್ರತಿಮೆಗಳನ್ನೂ, ಕೆತ್ತಿದ ವಿಗ್ರಹವನ್ನೂ, ಎರಕದ ವಿಗ್ರಹವನ್ನೂ ತೆಗೆದುಕೊಂಡಾಗ, ಯಾಜಕನು ಅವರಿಗೆ, “ನೀವು ಏನು ಮಾಡುತ್ತೀರಿ?” ಎಂದನು.</verse>
				<verse number="19">ಅವರು ಅವನಿಗೆ, “ನೀನು ಸುಮ್ಮನೆ ಇರು; ನಿನ್ನ ಬಾಯಿ ಮುಚ್ಚಿಕೊಂಡು ನಮ್ಮ ಸಂಗಡ ಬಂದು, ನಮಗೆ ತಂದೆಯಾಗಿಯೂ, ಯಾಜಕನಾಗಿಯೂ ಇರು. ನೀನು ಒಬ್ಬನ ಮನೆಗೆ ಯಾಜಕನಾಗಿರುವುದು ಒಳ್ಳೆಯದೋ ಅಥವಾ ಇಸ್ರಾಯೇಲಿನಲ್ಲಿ ಒಂದು ಗೋತ್ರಕ್ಕೂ, ಒಂದು ಕುಟುಂಬಕ್ಕೂ ಯಾಜಕನಾಗಿರುವುದು ಒಳ್ಳೆಯದೋ?” ಎಂದರು.</verse>
				<verse number="20">ಆಗ ಯಾಜಕನು ಸಂತೋಷಪಟ್ಟು ಏಫೋದನ್ನೂ, ಪ್ರತಿಮೆಗಳನ್ನೂ, ಕೆತ್ತಿದ ವಿಗ್ರಹವನ್ನೂ ತೆಗೆದುಕೊಂಡು ಜನರ ಮಧ್ಯದಲ್ಲಿ ಹೋದನು.</verse>
				<verse number="21">ಅವರು ತಿರುಗಿಕೊಂಡು ಹೊರಟು, ಚಿಕ್ಕವರನ್ನೂ, ಸಲಕರಣೆಗಳನ್ನೂ, ಪಶುಗಳನ್ನೂ ತಮಗೆ ಮುಂದಾಗಿ ಕಳುಹಿಸಿದರು.</verse>
				<verse number="22">ಅವರು ಮೀಕನ ಮನೆಯಿಂದ ಸ್ವಲ್ಪ ದೂರ ಹೋದಾಗ, ಮೀಕನ ಮನೆಯ ಸುತ್ತಲೂ ನೆರೆಮನೆಗಳಲ್ಲಿ ಇರುವ ಮನುಷ್ಯರು ಕೂಡಿಕೊಂಡು ದಾನರನ್ನು ಹಿಂದಟ್ಟಿ, ಅವರನ್ನು ಕೂಗಿ ಕರೆದರು.</verse>
				<verse number="23">ದಾನರು ತಮ್ಮ ಮುಖ ತಿರುಗಿಸಿ ಮೀಕನಿಗೆ, “ನೀನು ಗುಂಪು ಕೂಡಿಕೊಂಡು ಬರಲು ನಿನಗೆ ಏನಾಯಿತು?” ಎಂದರು.</verse>
				<verse number="24">ಅವನು, “ನಾನು ಮಾಡಿಕೊಂಡ ನನ್ನ ದೇವರುಗಳನ್ನೂ, ಯಾಜಕನನ್ನೂ ತೆಗೆದುಕೊಂಡು ಹೋದಿರಿ. ಇನ್ನು ನನಗೆ ಏನಿದೆ? ನೀವು ನನ್ನನ್ನು, ‘ನಿನಗೆ ಏನಾಯಿತೆಂದು ಕೇಳುವುದೇನು?’ ಎಂದನು.”</verse>
				<verse number="25">ಆದರೆ ದಾನನ ಮಕ್ಕಳು ಅವನಿಗೆ, “ಕೋಪಿಷ್ಟರು ನಿನ್ನ ಮೇಲೆ ಬೀಳದ ಹಾಗೆ ನೀನು ನಿನ್ನ ಪ್ರಾಣವನ್ನೂ, ನಿನ್ನ ಮನೆಯವರ ಪ್ರಾಣವನ್ನೂ ಕಳೆದುಕೊಳ್ಳದ ಹಾಗೆ ನಿನ್ನ ಶಬ್ದ ನಮಗೆ ಕೇಳಿಸದೆ ಇರಲಿ,” ಎಂದರು.</verse>
				<verse number="26">ದಾನನ ಮಕ್ಕಳು ತಮ್ಮ ಮಾರ್ಗವಾಗಿ ಹೋದರು. ಆಗ ಮೀಕನು, ಅವರು ತನಗಿಂತ ಬಲಿಷ್ಠರೆಂದು ಕಂಡು, ತಿರುಗಿಕೊಂಡು ತನ್ನ ಮನೆಗೆ ಹೋದನು.</verse>
				<verse number="27">ಅವರು ಮೀಕನು ಮಾಡಿಕೊಂಡವುಗಳನ್ನೂ, ಅವನಿಗಿದ್ದ ಯಾಜಕನನ್ನೂ ತೆಗೆದುಕೊಂಡು ವಿಶ್ರಾಂತಿಯಿಂದಲೂ, ಭರವಸದಿಂದಲೂ ಇದ್ದ ಲಯಿಷಿನ ಜನರ ಮೇಲೆ ಬಂದು, ಅವರನ್ನು ಖಡ್ಗದಿಂದ ಹೊಡೆದು, ಆ ಪಟ್ಟಣವನ್ನು ಬೆಂಕಿಯಿಂದ ಸುಟ್ಟುಬಿಟ್ಟರು.</verse>
				<verse number="28">ಅದು ಸೀದೋನಿಗೆ ದೂರವಾಗಿದ್ದುದರಿಂದಲೂ, ಯಾವ ಮನುಷ್ಯನ ಸಂಗಡಲಾದರೂ ಅವರಿಗೆ ಕೆಲಸವಿಲ್ಲದ್ದರಿಂದಲೂ ಅವರನ್ನು ಕಾಪಾಡಲು ಯಾರೂ ಇರಲಿಲ್ಲ. ಆ ಪಟ್ಟಣವು ಬೇತ್‌ರೆಹೋಬಿಗೆ ಸಮೀಪವಾದ ತಗ್ಗಿನಲ್ಲಿ ಇತ್ತು. ಈ ಪಟ್ಟಣವನ್ನು ದಾನ್ಯರು ಪುನಃ ಕಟ್ಟಿಸಿ ಅದರಲ್ಲಿ ವಾಸಿಸಿದರು.</verse>
				<verse number="29">ಮೊದಲು ಆ ಪಟ್ಟಣಕ್ಕೆ ಲಯಿಷೆಂಬ ಹೆಸರಿತ್ತು. ಈಗ ದಾನ್ಯರು ಆ ಪಟ್ಟಣಕ್ಕೆ ಇಸ್ರಾಯೇಲನಿಗೆ ಹುಟ್ಟಿದ ತಮ್ಮ ಮೂಲಪುರುಷನಾದ ದಾನನ ಹೆಸರಿನ ಪ್ರಕಾರ ದಾನ್ ಎಂದು ಹೆಸರಿಟ್ಟರು.</verse>
				<verse number="30">ಅಲ್ಲಿ ದಾನ್ಯರು ಕೆತ್ತಿದ ವಿಗ್ರಹವನ್ನು ತಮಗಾಗಿ ಸ್ಥಾಪಿಸಿಕೊಂಡರು. ಇಸ್ರಾಯೇಲರು ಸೆರೆಯಾಗಿ ಹೋಗುವವರೆಗೆ ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆದ ಯೋನಾತಾನನೂ ಅವನ ವಂಶದವರೂ ಅವನ ಮಕ್ಕಳೂ ದಾನನ ಗೋತ್ರದವರಿಗೆ ಯಾಜಕರಾಗಿದ್ದರು.</verse>
				<verse number="31">ದೇವರ ಮನೆ ಶೀಲೋವಿನಲ್ಲಿ ಇರುವ ಮಟ್ಟಿಗೂ, ಅವರು ಮೀಕನು ಮಾಡಿದ ವಿಗ್ರಹವನ್ನು ಇಟ್ಟುಕೊಂಡಿದ್ದರು.</verse>
			</chapter>
			<chapter number="19">
				<verse number="1">ಇಸ್ರಾಯೇಲಿನಲ್ಲಿ ಆ ದಿವಸಗಳಲ್ಲಿ ಅರಸನಿರಲಿಲ್ಲ. ಎಫ್ರಾಯೀಮ್ ಬೆಟ್ಟದ ಒಂದು ಮೂಲೆಯಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಅವನು ಯೆಹೂದದ ಬೇತ್ಲೆಹೇಮಿನವಳಾದಂಥ ಸ್ತ್ರೀಯನ್ನು ಉಪಪತ್ನಿಯಾಗಿ ತೆಗೆದುಕೊಂಡಿದ್ದನು.</verse>
				<verse number="2">ಅವನ ಉಪಪತ್ನಿ ಅವನಿಗೆ ವಿರೋಧವಾಗಿ ಜಾರತ್ವ ಮಾಡಿ, ಅವನನ್ನು ಬಿಟ್ಟು, ಯೆಹೂದದ ಬೇತ್ಲೆಹೇಮಿನಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ, ಅಲ್ಲಿ ನಾಲ್ಕು ತಿಂಗಳಿದ್ದಳು.</verse>
				<verse number="3">ಆಗ ಅವಳ ಗಂಡನು ಎದ್ದು, ಅವಳ ಸಂಗಡ ಪ್ರೀತಿಯಿಂದ ಮಾತನಾಡಿ, ಅವಳನ್ನು ತಿರುಗಿ ಕರೆತರುವುದಕ್ಕೆ ತನ್ನ ಸೇವಕನನ್ನೂ, ಎರಡು ಕತ್ತೆಗಳನ್ನೂ ತೆಗೆದುಕೊಂಡು ಅವಳ ಬಳಿಗೆ ಹೋದನು. ಅವಳು ಅವನನ್ನು ತನ್ನ ತಂದೆಯ ಮನೆಗೆ ಕರೆದುಕೊಂಡು ಹೋದಳು. ಆಕೆಯ ತಂದೆ ಅವನನ್ನು ಕಂಡಾಗ, ಸಂತೋಷದಿಂದ ಅವನನ್ನು ಸ್ವಾಗತಿಸಿದನು.</verse>
				<verse number="4">ಅವನ ಮಾವನು ಅಂದರೆ ಆ ಸ್ತ್ರೀಯ ತಂದೆಯು ಅವನನ್ನು ಅಲ್ಲಿರುವಂತೆ ಒತ್ತಾಯ ಮಾಡಿದನು. ಆದ್ದರಿಂದ ಅವನು ಅಲ್ಲಿ ಊಟಮಾಡುತ್ತಾ, ಕುಡಿಯುತ್ತಾ, ಮಲಗುತ್ತಾ ಮೂರು ದಿನಗಳನ್ನು ಕಳೆದನು.</verse>
				<verse number="5">ನಾಲ್ಕನೆಯ ದಿನ ಅವರು ಬೇಗನೆ ಎದ್ದು, ಹೊರಡಲಿಕ್ಕೆ ಸಿದ್ಧರಾದರು. ಆದರೆ ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಸ್ವಲ್ಪ ಊಟಮಾಡಿ ಚೇತರಿಸಿಕೋ, ಆಮೇಲೆ ನೀವು ಹೋಗಬಹುದು,” ಎಂದನು.</verse>
				<verse number="6">ಆದ್ದರಿಂದ ಅವರಿಬ್ಬರು ಊಟ ಮಾಡಲು, ಕುಡಿಯಲು ಕುಳಿತುಕೊಂಡರು. ಅನಂತರದಲ್ಲಿ ಆ ಸ್ತ್ರೀಯ ತಂದೆಯು, “ಈ ರಾತ್ರಿ ಇಲ್ಲೇ ಇದ್ದುಕೊಂಡು ಸಂತೋಷಪಡು,” ಎಂದು ಹೇಳಿದನು.</verse>
				<verse number="7">ಆ ಮನುಷ್ಯನು ಎದ್ದು ಹೊರಡಲು ಸಿದ್ಧನಾದಾಗ, ಅವನ ಮಾವನು ಅವನನ್ನು ಆ ರಾತ್ರಿ ಅಲ್ಲಿಯೇ ಇರುವಂತೆ ಒಪ್ಪಿಸಿದನು.</verse>
				<verse number="8">ಐದನೆಯ ದಿನದ ಮುಂಜಾನೆ ಅವನು ಹೊರಡಲು ಎದ್ದೇಳುವಾಗ, ಆ ಸ್ತ್ರೀಯ ತಂದೆಯು, “ವಿಶ್ರಮಿಸಿಕೋ, ಮಧ್ಯಾಹ್ನದವರೆಗೆ ಇರು,” ಎಂದನು. ಅದರಂತೆ ಅವರಿಬ್ಬರು ಒಟ್ಟಾಗಿ ಊಟಮಾಡಿದರು.</verse>
				<verse number="9">ಅವನೂ, ಅವನ ಉಪಪತ್ನಿಯೂ ಅವನ ಸೇವಕನೂ ಹೋಗುವುದಕ್ಕೆ ಎದ್ದಾಗ, ಅವನ ಮಾವನು ಅವನಿಗೆ, “ಇಗೋ, ಹೊತ್ತು ಹೋಗಿ ಸಂಜೆ ಆಯಿತು. ಈ ರಾತ್ರಿ ನೀನು ದಯಮಾಡಿ ಇಲ್ಲೇ ಇರು; ಹೊತ್ತು ಮುಣುಗುತ್ತಾ ಬಂತು. ನೀನು ಈ ರಾತ್ರಿ ಇಲ್ಲಿದ್ದು, ನಿನ್ನ ಗುಡಾರಕ್ಕೆ ನಾಳೆ ಬೆಳಿಗ್ಗೆ ಎದ್ದು, ನಿಮ್ಮ ಮಾರ್ಗ ಹಿಡಿದು ಹೋಗಬಹುದು,” ಎಂದನು.</verse>
				<verse number="10">ಆದರೆ ಆ ಮನುಷ್ಯನು ಆ ರಾತ್ರಿ ಅಲ್ಲಿರುವುದಕ್ಕೆ ಮನಸ್ಸಿಲ್ಲದೆ, ಎದ್ದು ತಡಿಕಟ್ಟಿದ ಎರಡು ಕತ್ತೆಗಳ ಮತ್ತು ತನ್ನ ಉಪಪತ್ನಿಯ ಸಂಗಡ ಹೊರಟುಹೋಗಿ, ಯೆರೂಸಲೇಮು ಎಂಬ ಯೆಬೂಸಿಗೆ ಸರಿಯಾಗಿ ಬಂದನು.</verse>
				<verse number="11">ಅವರು ಯೆಬೂಸಿಗೆ ಸಮೀಪಿಸಿದಾಗ, ಹೊತ್ತು ಬಹಳ ಹೋಗಿತ್ತು. ಆಗ ಸೇವಕನು ತನ್ನ ಯಜಮಾನನಿಗೆ, “ನೀನು ದಯಮಾಡಿ ಬಾ; ಈ ಯೆಬೂಸಿಯರ ಪಟ್ಟಣಕ್ಕೆ ತಿರುಗಿಕೊಂಡು, ಅಲ್ಲಿ ರಾತ್ರಿಯಲ್ಲಿ ಇಳಿದುಕೊಳ್ಳೋಣ,” ಎಂದನು.</verse>
				<verse number="12">ಆದರೆ ಅವನ ಯಜಮಾನನು ಅವನಿಗೆ, “ನಾವು ಇಲ್ಲಿ ಇಸ್ರಾಯೇಲರಲ್ಲದವರ ಪಟ್ಟಣದಲ್ಲಿ ತಂಗಬಾರದು; ಗಿಬೆಯ ಪಟ್ಟಣಕ್ಕೆ ಹೋಗೋಣ,” ಎಂದನು.</verse>
				<verse number="13">ಅವನು ಸೇವಕನಿಗೆ, “ಗಿಬೆಯದಲ್ಲಾದರೂ, ರಾಮಾದಲ್ಲಾದರೂ ಇಳಿದುಕೊಳ್ಳುವುದಕ್ಕೆ ಆ ಸ್ಥಳಗಳಲ್ಲಿ ಒಂದಕ್ಕೆ ಸೇರೋಣ ಬಾ,” ಎಂದನು.</verse>
				<verse number="14">ಹಾಗೆಯೇ ಅವರು ದಾಟಿಹೋದರು. ಅವರು ಬೆನ್ಯಾಮೀನನಿಗೆ ಸೇರಿದ ಗಿಬೆಯ ಊರಿನ ಸಮೀಪಕ್ಕೆ ಬಂದಾಗ ಸೂರ್ಯ ಮುಳುಗಿತ್ತು.</verse>
				<verse number="15">ಆದ್ದರಿಂದ ಅವರು ಗಿಬೆಯದಲ್ಲಿ ರಾತ್ರಿ ಕಳೆಯಲು ಉಳಿದರು. ಅವರು ಹೋಗಿ ಪಟ್ಟಣದ ಮಧ್ಯದಲ್ಲಿ ಕುಳಿತುಕೊಂಡರು. ಮನೆಯಲ್ಲಿ ಇಳಿದುಕೊಳ್ಳುವುದಕ್ಕೆ ಅವರನ್ನು ಯಾರೂ ಸೇರಿಸಿಕೊಳ್ಳಲಿಲ್ಲ.</verse>
				<verse number="16">ಆಗ ಒಬ್ಬ ಮುದುಕನು ಹೊಲದಲ್ಲಿ ತನ್ನ ಕೆಲಸಮಾಡಿ ಬರುತ್ತಿದ್ದನು. ಆ ಮನುಷ್ಯನು ಎಫ್ರಾಯೀಮ್ ಬೆಟ್ಟದ ಪ್ರದೇಶಕ್ಕೆ ಸೇರಿದವನೂ ಬೆನ್ಯಾಮೀನರ ಊರಾದ ಗಿಬೆಯದಲ್ಲಿ ಪ್ರವಾಸಿಯಾಗಿಯೂ ಇದ್ದನು.</verse>
				<verse number="17">ಆ ಮುದುಕನು ತನ್ನ ಕಣ್ಣೆತ್ತಿ ಆ ಪಟ್ಟಣದ ಬೀದಿಯಲ್ಲಿ ಕುಳಿತಿದ್ದ ಯಾತ್ರಿಕನನ್ನು ಕಂಡು, “ನೀನು ಎಲ್ಲಿಗೆ ಹೋಗುತ್ತೀ? ಎಲ್ಲಿಂದ ಬಂದೆ?” ಎಂದನು.</verse>
				<verse number="18">ಅವನು ಇವನಿಗೆ, “ನಾವು ಯೆಹೂದದ ಬೇತ್ಲೆಹೇಮಿನಿಂದ ಎಫ್ರಾಯೀಮ್ ಬೆಟ್ಟದ ಕಡೆಯಲ್ಲಿ ಹಾದು ಹೋಗುತ್ತೇವೆ. ನಾನು ಅಲ್ಲಿಯವನು. ಯೆಹೂದದ ಬೇತ್ಲೆಹೇಮಿಗೆ ಹೋಗಿದ್ದೆನು. ಈಗ ಯೆಹೋವ ದೇವರ ಮನೆಗೆ ಹೋಗುತ್ತೇನೆ. ಆದರೆ ನಮ್ಮನ್ನು ಯಾರೂ ಮನೆಗೆ ಸೇರಿಸಿಕೊಳ್ಳಲಿಲ್ಲ.</verse>
				<verse number="19">ಆದರೂ ನಮ್ಮ ಕತ್ತೆಗಳಿಗೆ ಮೇವೂ, ನಿನ್ನ ಸೇವಕನಾದ ನನಗೂ, ನಿನ್ನ ಸೇವಕಿಗೂ, ನಿನ್ನ ಸೇವಕನ ಸಂಗಡ ಇರುವ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿ ಮತ್ತು ದ್ರಾಕ್ಷಾರಸವು ಉಂಟು. ಏನೂ ಕೊರತೆ ಇಲ್ಲ,” ಎಂದನು.</verse>
				<verse number="20">ಆಗ ಆ ಮುದುಕನು, “ನಿನಗೆ ಶುಭವಾಗಲಿ, ನಿನ್ನ ಕೊರತೆಯೆಲ್ಲಾ ನನ್ನ ಮೇಲೆ ಇರಲಿ, ಹೇಗಾದರೂ ಬೀದಿಯೊಳಗೆ ಇಳಿದುಕೊಳ್ಳಬೇಡ,” ಎಂದು ಹೇಳಿ</verse>
				<verse number="21">ಅವನನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ, ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕೈಕಾಲುಗಳನ್ನು ತೊಳೆದು ತಿಂದು ಕುಡಿದರು.</verse>
				<verse number="22">ಅವರು ಸಂತೋಷಿಸುತ್ತಿರುವ ವೇಳೆಯಲ್ಲಿ ಆ ಪಟ್ಟಣದ ದುಷ್ಟ ಮನುಷ್ಯರಲ್ಲಿ ಕೆಲವರು ಆ ಮನೆಯನ್ನು ಸುತ್ತಿಕೊಂಡು, ಕದವನ್ನು ಬಡಿದು, ಆ ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದ ಆ ಮನುಷ್ಯನೊಡನೆ ನಮಗೆ ಸಂಗಮವಾಗಬೇಕು, ಹೊರಗೆ ಬಾ,” ಎಂದು ಹೇಳಿದರು.</verse>
				<verse number="23">ಆಗ ಮನೆಯ ಯಜಮಾನನಾದ ಆ ಮನುಷ್ಯನು ಅವರ ಬಳಿಗೆ ಹೊರಟುಹೋಗಿ, ಅವರಿಗೆ, “ಹಾಗೆ ಮಾಡಬೇಡಿರಿ. ನನ್ನ ಸಹೋದರರೇ, ದಯಮಾಡಿ ಕೆಟ್ಟತನ ಮಾಡಬೇಡಿರಿ. ಆ ಮನುಷ್ಯನು ನನ್ನ ಮನೆಯಲ್ಲಿ ಪ್ರವೇಶಿಸಿದ್ದರಿಂದ ನೀವು ಅಂಥ ಬುದ್ಧಿಹೀನತೆಯನ್ನು ಮಾಡಬೇಡಿರಿ.</verse>
				<verse number="24">ಕನ್ನಿಕೆಯಾದ ನನ್ನ ಮಗಳೂ, ಅವನ ಉಪಪತ್ನಿಯನ್ನೂ ಹೊರಗೆ ತರುವೆನು. ನೀವು ಅವರನ್ನು ಕುಂದಿಸಿ ನಿಮಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡಿರಿ, ಆ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿರಿ,” ಎಂದನು.</verse>
				<verse number="25">ಆದರೆ ಆ ಮನುಷ್ಯರು ಅವನ ಮಾತನ್ನು ಕೇಳಲೊಲ್ಲದೆ ಹೋದರು. ಆದ್ದರಿಂದ ಆ ಮನುಷ್ಯನು ತನ್ನ ಉಪಪತ್ನಿಯನ್ನು ಹಿಡಿದು ಹೊರಗೆ ಅವರ ಬಳಿಯಲ್ಲಿ ತಂದು ಬಿಟ್ಟನು. ಅವರು ಅವಳನ್ನು ತೆಗೆದುಕೊಂಡು ಉದಯಕಾಲದ ಪರ್ಯಂತರ ರಾತ್ರಿಯೆಲ್ಲಾ ಕೆಡಿಸಿ, ಉದಯವಾಗುವಾಗ ಅವಳನ್ನು ಬಿಟ್ಟುಬಿಟ್ಟರು.</verse>
				<verse number="26">ಆ ಸ್ತ್ರೀ ಉದಯಕಾಲಕ್ಕೆ ಮುಂಚೆ ಬಂದು ಬೆಳಗಾಗುವ ಮಟ್ಟಿಗೂ ಅಲ್ಲಿ ತನ್ನ ಯಜಮಾನನು ಇರುವ ಮನೆಯ ಬಾಗಿಲ ಬಳಿಯಲ್ಲಿ ಬಿದ್ದಿದ್ದಳು.</verse>
				<verse number="27">ಅವಳ ಯಜಮಾನನು ಉದಯದಲ್ಲಿ ಎದ್ದು, ಮನೆಯ ಬಾಗಿಲನ್ನು ತೆರೆದು, ತನ್ನ ಮಾರ್ಗವಾಗಿ ಹೊರಡುವಾಗ, ತನ್ನ ಉಪಪತ್ನಿ ಮನೆಯ ಬಾಗಿಲ ಮುಂದೆ ತನ್ನ ಕೈಗಳನ್ನು ಹೊಸ್ತಿಲ ಮೇಲೆ ಇಟ್ಟವಳಾಗಿ ಬಿದ್ದಿದ್ದಳು.</verse>
				<verse number="28">ಆಗ ಅವನು ಅವಳಿಗೆ, “ಏಳು, ಹೋಗೋಣ,” ಎಂದನು. ಆದರೆ ಅವಳಿಂದ ಪ್ರತ್ಯುತ್ತರ ಬರಲಿಲ್ಲ. ಆಗ ಆ ಮನುಷ್ಯನು ಅವಳ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು, ತನ್ನ ಸ್ಥಳಕ್ಕೆ ಹೋದನು.</verse>
				<verse number="29">ಅವನು ತನ್ನ ಮನೆಗೆ ಹೋದಾಗ, ಒಂದು ಖಡ್ಗವನ್ನು ತೆಗೆದುಕೊಂಡು ತನ್ನ ಉಪಪತ್ನಿಯನ್ನು ಹಿಡಿದು ಎಲುಬುಗಳ ಸಂಗಡ ಹನ್ನೆರಡು ತುಂಡುಗಳಾಗಿ ಕಡಿದು, ಅವುಗಳನ್ನು ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿದನು.</verse>
				<verse number="30">ಆಗ ಅದನ್ನು ಕಂಡವರೆಲ್ಲಾ, “ಇಸ್ರಾಯೇಲರು ಈಜಿಪ್ಟಿನಿಂದ ಬಂದ ದಿವಸ ಮೊದಲ್ಗೊಂಡು ಈ ಪರ್ಯಂತರ ಇಂಥ ಕಾರ್ಯವು ಆದದ್ದೂ ಇಲ್ಲ, ಕಂಡದ್ದೂ ಇಲ್ಲ. ನೀವು ಇದರ ವಿಷಯ ಆಲೋಚಿಸಿ ಯೋಚಿಸಿರಿ. ನಾವೇನು ಮಾಡಬೇಕು ಹೇಳಿರಿ?” ಎಂದರು.</verse>
			</chapter>
			<chapter number="20">
				<verse number="1">ಆಗ ಇಸ್ರಾಯೇಲರೆಲ್ಲರು ಹೊರಟು ಗಿಲ್ಯಾದ್ ಸಹಿತವಾಗಿ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಒಬ್ಬ ಮನುಷ್ಯನಂತೆ ಮಿಚ್ಪೆಯಲ್ಲಿ ಯೆಹೋವ ದೇವರ ಮುಂದೆ ಕೂಡಿಬಂದರು.</verse>
				<verse number="2">ಇದಲ್ಲದೆ ಇಸ್ರಾಯೇಲಿನ ಸಮಸ್ತ ಗೋತ್ರಗಳಾದ ಸಮಸ್ತ ಜನರ ಮುಖ್ಯಸ್ಥರು ಬಿಚ್ಚು ಖಡ್ಗ ಹಿಡಿದುಕೊಂಡ ನಾಲ್ಕು ಲಕ್ಷ ಕಾಲಾಳುಗಳು ದೇವರ ಸಮೂಹದ ಜನರಲ್ಲಿಗೆ ಬಂದರು.</verse>
				<verse number="3">ಬೆನ್ಯಾಮೀನ್ಯರು, ಇಸ್ರಾಯೇಲರು ಮಿಚ್ಪೆಗೆ ಬಂದ ವರ್ತಮಾನವನ್ನು ಕೇಳಿದರು. ಆಗ ಇಸ್ರಾಯೇಲರು, “ನೀವು ಮಾತನಾಡಿರಿ; ಆ ಕೆಟ್ಟತನವು ಹೇಗೆ ಆಯಿತು?” ಎಂದರು.</verse>
				<verse number="4">ಹತಳಾದ ಸ್ತ್ರೀಯ ಗಂಡನಾದ ಆ ಲೇವಿಯನು ಅವರಿಗೆ ಉತ್ತರಕೊಟ್ಟು, “ನಾನು ಬೆನ್ಯಾಮೀನನ ಊರಾದ ಗಿಬೆಯಕ್ಕೆ ನನ್ನ ಉಪಪತ್ನಿ ಸಹಿತವಾಗಿ ಇಳಿದುಕೊಳ್ಳುವುದಕ್ಕೆ ಬಂದೆನು.</verse>
				<verse number="5">ಆದರೆ ಗಿಬೆಯ ಪಟ್ಟಣದವರು ನನಗೆ ವಿರೋಧವಾಗಿ ಎದ್ದು, ನಾನು ಇಳಿದಿದ್ದ ಮನೆಯನ್ನು ರಾತ್ರಿಯಲ್ಲಿ ಮುತ್ತಿಕೊಂಡು ನನ್ನನ್ನು ಕೊಲ್ಲಬೇಕೆಂದಿದ್ದರು ಮತ್ತು ನನ್ನ ಉಪಪತ್ನಿಯನ್ನು ಅತ್ಯಾಚಾರಮಾಡಿದರು. ಅವಳು ಸತ್ತುಹೋದಳು.</verse>
				<verse number="6">ಅವರು ಇಸ್ರಾಯೇಲಿನಲ್ಲಿ ಇಂಥ ದುಷ್ಕಾರ್ಯವನ್ನೂ ಅತಿರೇಕದ ಕೆಲಸವನ್ನೂ ಮಾಡಿದ್ದರಿಂದ, ನಾನು ನನ್ನ ಉಪಪತ್ನಿಯನ್ನು ಹಿಡಿದು, ಅವಳನ್ನು ಕಡಿದು, ಇಸ್ರಾಯೇಲಿನ ಬಾಧ್ಯತೆಯಾದ ಎಲ್ಲಾ ಸೀಮೆಗಳಿಗೆ ಕಳುಹಿಸಿದೆನು. ನೀವೆಲ್ಲರೂ ಇಸ್ರಾಯೇಲರಾಗಿದ್ದೀರಿ.</verse>
				<verse number="7">ಇಲ್ಲಿ ಕೂಡಿದ ಎಲ್ಲಾ ಇಸ್ರಾಯೇಲರೇ, ನಿಮ್ಮ ಮಾತನ್ನೂ ಆಲೋಚನೆಯನ್ನೂ ಇಲ್ಲಿ ಹೇಳಿಕೊಳ್ಳಿರಿ,” ಎಂದನು.</verse>
				<verse number="8">ಆಗ ಸಮಸ್ತ ಜನರೂ ಒಟ್ಟಾಗಿ ಎದ್ದು, “ನಮ್ಮಲ್ಲಿ ಯಾವನೂ ತನ್ನ ಡೇರೆಗೆ ಹೋಗದಿರಲಿ. ತನ್ನ ಮನೆಗೆ ಹಿಂದಿರುಗದಿರಲಿ.</verse>
				<verse number="9">ಈಗ ನಾವು ಗಿಬೆಯಕ್ಕೆ ಮಾಡುವುದು ಇದೇ. ಅದಕ್ಕೆ ವಿರೋಧವಾಗಿ ಚೀಟುಗಳು ಬಿದ್ದ ಪ್ರಕಾರ ಹೋಗೋಣ.</verse>
				<verse number="10">ಆದರೆ ಬೆನ್ಯಾಮೀನನ ಗೋತ್ರದವರಾದ ಗಿಬೆಯದವರು ಇಸ್ರಾಯೇಲಿನಲ್ಲಿ ಮಾಡಿದ ಈ ಅತಿರೇಕದ ಕೆಲಸಕ್ಕೆ ತಕ್ಕ ಪ್ರಕಾರ ಮಾಡುವ ಹಾಗೆ ನಾವು ಆಹಾರವನ್ನು ತೆಗೆದುಕೊಂಡು ಬರುವುದಕ್ಕೆ ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನೂರಕ್ಕೆ ಹತ್ತು ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಜನರನ್ನು ತೆಗೆದುಕೊಂಡು ಕಳುಹಿಸುತ್ತೇವೆ,” ಎಂದರು.</verse>
				<verse number="11">ಹೀಗೆಯೇ ಇಸ್ರಾಯೇಲರೆಲ್ಲರೂ ಒಟ್ಟಾಗಿ ಆ ಪಟ್ಟಣದ ಮುಂದೆ ಕೂಡಿದರು.</verse>
				<verse number="12">ಅಲ್ಲಿಂದ ಇಸ್ರಾಯೇಲ್ ಗೋತ್ರಗಳು ಬೆನ್ಯಾಮೀನನ ಸಮಸ್ತ ಗೋತ್ರಗಳಿಗೆ ದೂತರನ್ನು ಕಳುಹಿಸಿ, “ನಿಮ್ಮಲ್ಲಿ ಮಾಡಿದ ಈ ಕೆಟ್ಟತನವೇನು?</verse>
				<verse number="13">ಗಿಬೆಯದಲ್ಲಿರುವ ದುಷ್ಟ ಮನುಷ್ಯರನ್ನು ನಾವು ಕೊಂದು, ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ, ಅವರನ್ನು ಒಪ್ಪಿಸಿಕೊಡಿರಿ,” ಎಂದು ಹೇಳಿ ಕಳುಹಿಸಿದರು. ಆದರೆ ಬೆನ್ಯಾಮೀನ್ಯರು ಇಸ್ರಾಯೇಲರಾದ ತಮ್ಮ ಸಹೋದರರ ಮಾತನ್ನು ಕೇಳುವುದಕ್ಕೆ ಮನಸ್ಸಿಲ್ಲದೆ,</verse>
				<verse number="14">ಇಸ್ರಾಯೇಲರ ಸಂಗಡ ಯುದ್ಧಮಾಡುವುದಕ್ಕೆ ಹೊರಡುವ ಹಾಗೆ ಪಟ್ಟಣಗಳಲ್ಲಿಂದ ಗಿಬೆಯದಲ್ಲಿ ಬಂದು ಕೂಡಿದರು.</verse>
				<verse number="15">ಆ ಕಾಲದಲ್ಲಿ ಆಯಾ ಪಟ್ಟಣಗಳಿಂದ ಯುದ್ಧಸನ್ನದ್ಧರಾಗಿ ಕೂಡಿಬಂದ ಬೆನ್ಯಾಮೀನ್ಯರ ಸಂಖ್ಯೆಯು ಇಪ್ಪತ್ತಾರು ಸಾವಿರವಾಗಿತ್ತು. ಇವರಲ್ಲದೆ ಗಿಬೆಯದಲ್ಲಿಯೇ ಏಳು ನೂರು ಮಂದಿ ಯುದ್ಧವೀರರಿದ್ದರು.</verse>
				<verse number="16">ಈ ಸಮಸ್ತ ಜನರಲ್ಲಿ ಆರಿಸಿದ ಏಳು ನೂರು ಜನರು ಬಲಗೈ ಅಭ್ಯಾಸವಿಲ್ಲದವರಾಗಿದ್ದರು. ಅವರೆಲ್ಲರೂ ಒಂದು ಕೂದಲೆಳೆ ತಪ್ಪದ ಹಾಗೆ ಕವಣೆಯಿಂದ ಕಲ್ಲೆಸೆಯುವವರಾಗಿದ್ದರು.</verse>
				<verse number="17">ಬೆನ್ಯಾಮೀನನವರ ಹೊರತು ಇಸ್ರಾಯೇಲರಲ್ಲಿ ನಾಲ್ಕು ಲಕ್ಷ ಯೋಧರಿದ್ದರು. ಇವರೆಲ್ಲರೂ ಯುದ್ಧವೀರರಾಗಿದ್ದರು.</verse>
				<verse number="18">ಆಗ ಇಸ್ರಾಯೇಲರು ಬೇತೇಲಿಗೆ ಹೋಗಿ, ತಮ್ಮಲ್ಲಿ ಮೊದಲು ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕಾದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಯೆಹೋವ ದೇವರು, “ಯೆಹೂದ ಗೋತ್ರದವರು ಮೊದಲು ಹೋಗಬೇಕು,” ಎಂದರು.</verse>
				<verse number="19">ಆಗ ಇಸ್ರಾಯೇಲರು ಉದಯದಲ್ಲಿ ಎದ್ದು ಗಿಬೆಯಕ್ಕೆ ಎದುರಾಗಿ ಪಾಳೆಯಮಾಡಿಕೊಂಡರು.</verse>
				<verse number="20">ಇಸ್ರಾಯೇಲಿನ ಮನುಷ್ಯರು ಗಿಬೆಯದ ಬಳಿಯಲ್ಲಿ ಬೆನ್ಯಾಮೀನ್ಯರೊಡನೆ ಯುದ್ಧಮಾಡುವದಕ್ಕೋಸ್ಕರ ವ್ಯೂಹ ಕಟ್ಟಿದರು.</verse>
				<verse number="21">ಆಗ ಬೆನ್ಯಾಮೀನ್ಯರು ಗಿಬೆಯದಿಂದ ಹೊರಟು, ಇಸ್ರಾಯೇಲರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಆ ದಿವಸದಲ್ಲಿ ನೆಲಕ್ಕೆ ಬೀಳುವಂತೆ ಸಂಹರಿಸಿದರು.</verse>
				<verse number="22">ಇಸ್ರಾಯೇಲರಾದ ಜನರು ಬಲಗೊಂಡು, ಮೊದಲನೆಯ ದಿವಸ ಯುದ್ಧಕ್ಕೆ ವ್ಯೂಹ ಕಟ್ಟಿದ ಸ್ಥಳದಲ್ಲಿ ತಿರುಗಿ ವ್ಯೂಹ ಕಟ್ಟಿದರು.</verse>
				<verse number="23">ಇಸ್ರಾಯೇಲರು ಯೆಹೋವ ದೇವರ ಬಳಿಗೆ ಹೋಗಿ, ಅವರ ಮುಂದೆ ಸಂಜೆಯವರೆಗೆ ಅತ್ತು, “ನಮ್ಮ ಸಹೋದರರಾದ ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕೋ?” ಎಂದು ಯೆಹೋವ ದೇವರನ್ನು ಕೇಳಿದರು. ಅದಕ್ಕೆ ಯೆಹೋವ ದೇವರು, “ಅವರ ಮೇಲೆ ಹೋಗಿರಿ,” ಎಂದರು. ಎರಡನೆಯ ದಿವಸದಲ್ಲಿ ಇಸ್ರಾಯೇಲರು ಬೆನ್ಯಾಮೀನ್ಯರ ಬಳಿಗೆ ಬಂದರು.</verse>
				<verse number="24">ಆಗ ಬೆನ್ಯಾಮೀನನವರು ಆ ಎರಡನೆಯ ದಿವಸದಲ್ಲಿ ಗಿಬೆಯದಿಂದ ಅವರಿಗೆ ಎದುರಾಗಿ ಹೊರಟುಬಂದು,</verse>
				<verse number="25">ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯಾದಿಂದ ಹೊರಗೆ ಬಂದು ಇಸ್ರಾಯೇಲರಲ್ಲಿ ಖಡ್ಗ ಹಿಡಿಯುವ ಹದಿನೆಂಟು ಸಾವಿರ ಜನರನ್ನು ನೆಲಕ್ಕೆ ಉರುಳಿಸಿದರು.</verse>
				<verse number="26">ಆಗ ಇಸ್ರಾಯೇಲರೆಲ್ಲರೂ ಸಮಸ್ತ ಸೇನೆಯೂ ಬೇತೇಲಿಗೆ ಹೊರಟು, ಅಲ್ಲಿ ಅಳುತ್ತಾ ಯೆಹೋವ ದೇವರ ಮುಂದೆ ಕುಳಿತುಕೊಂಡು, ಆ ಸಂಜೆಯವರೆಗೆ ಉಪವಾಸವಾಗಿದ್ದು, ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನದ ಸಮರ್ಪಣೆಗಳನ್ನೂ ಅರ್ಪಿಸಿದರು.</verse>
				<verse number="27">ಏಕೆಂದರೆ ಆ ದಿವಸಗಳಲ್ಲಿ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ,</verse>
				<verse number="28">ಆರೋನನ ಮೊಮ್ಮಗನೂ, ಎಲಿಯಾಜರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದದರಿಂದಲೂ, ಇಸ್ರಾಯೇಲರು, “ನಮ್ಮ ಸಹೋದರರಾದ ಬೆನ್ಯಾಮೀನ್ಯರಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವುದಕ್ಕೆ ಹೋಗಬೇಕೋ ಬೇಡವೋ?” ಎಂದು ದೇವರನ್ನು ಕೇಳಿಕೊಂಡರು. ಯೆಹೋವ ದೇವರು, “ಹೋಗಿರಿ, ಏಕೆಂದರೆ ನಾಳೆ ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದರು.</verse>
				<verse number="29">ಇಸ್ರಾಯೇಲರು ಗಿಬೆಯದ ಸುತ್ತಲೂ ಹೊಂಚಿ ನೋಡುವವರನ್ನು ಇಟ್ಟರು.</verse>
				<verse number="30">ಮೂರನೆಯ ದಿವಸದಲ್ಲಿ ಇಸ್ರಾಯೇಲರು ಬೆನ್ಯಾಮೀನ್ಯರಿಗೆ ಎದುರಾಗಿ ಹೋಗಿ ಮೊದಲು ಎರಡು ಸಾರಿ ಮಾಡಿದ ಹಾಗೆಯೇ, ಗಿಬೆಯದ ಸಮೀಪದಲ್ಲಿ ವ್ಯೂಹವನ್ನು ಕಟ್ಟಿದರು.</verse>
				<verse number="31">ಆಗ ಬೆನ್ಯಾಮೀನ್ಯರು ಇಸ್ರಾಯೇಲ್ ಜನಕ್ಕೆ ಎದುರಾಗಿ ಹೊರಟು, ಪಟ್ಟಣದ ಬಳಿಯಿಂದ ಹೊರಬಂದು, ಅಡವಿಯಲ್ಲಿ ಹೆದ್ದಾರಿಯಾದ ಬೇತೇಲಿಗೂ ಗಿಬೆಯಕ್ಕೂ ಹೋಗುವ ಎರಡು ಮಾರ್ಗಗಳಲ್ಲಿ ಇಸ್ರಾಯೇಲ್ ಜನರೊಳಗೆ ಮೊದಲಿನ ಹಾಗೆಯೇ ಹೆಚ್ಚು ಕಡಿಮೆ ಮೂವತ್ತು ಜನರನ್ನು ಹೊಡೆದು ಕೊಲ್ಲಲಾರಂಭಿಸಿದಾಗ,</verse>
				<verse number="32">ಬೆನ್ಯಾಮೀನ್ಯರು, “ಅವರು ಮೊದಲಿನ ಹಾಗೆಯೇ ನಮ್ಮ ಮುಂದೆ ಸೋತುಹೋಗುತ್ತಾರೆ,” ಎಂದುಕೊಂಡರು. ಆದರೆ ಇಸ್ರಾಯೇಲರು, “ಅವರನ್ನು ಪಟ್ಟಣದ ಬಳಿಯಿಂದ ಹೆದ್ದಾರಿಗಳಿಗೆ ಎಳೆದುಕೊಳ್ಳುವ ಹಾಗೆ ನಾವು ಹಿಂದಕ್ಕೆ ಓಡಿಹೋಗೋಣ,” ಎಂದುಕೊಂಡರು.</verse>
				<verse number="33">ಇಸ್ರಾಯೇಲರೆಲ್ಲರೂ ತಮ್ಮ ಸ್ಥಳದಿಂದ ಎದ್ದು, ಬಾಳ್ ತಾಮಾರಿನಲ್ಲಿ ವ್ಯೂಹವನ್ನು ಕಟ್ಟಿದರು. ಆಗ ಗಿಬೆಯದ ಗವಿಯಲ್ಲಿ ಹೊಂಚಿ ನೋಡುತ್ತಿದ್ದ ಇಸ್ರಾಯೇಲರು ಹೊರಟು ಬಂದರು.</verse>
				<verse number="34">ಅವರಲ್ಲಿ ಆರಿಸಿದ ಹತ್ತು ಸಾವಿರ ಮನುಷ್ಯರು ಗಿಬೆಯಕ್ಕೆ ವಿರೋಧವಾಗಿ ಬಂದರು. ಯುದ್ಧವು ಘೋರವಾಗಿತ್ತು. ಆದರೆ ಬೆನ್ಯಾಮೀನ್ಯರು, ಕೇಡು ತಮಗೆ ಸಮೀಪವಾಗಿತ್ತೆಂದು ಅರಿಯದೆ ಇದ್ದರು.</verse>
				<verse number="35">ಆಗ ಯೆಹೋವ ದೇವರು ಇಸ್ರಾಯೇಲಿನ ಮುಂದೆ ಬೆನ್ಯಾಮೀನ್ಯರನ್ನು ಹೊಡೆದರು. ಆ ದಿವಸದಲ್ಲಿ ಇಸ್ರಾಯೇಲರು ಬೆನ್ಯಾಮೀನ್ಯರಲ್ಲಿ ಖಡ್ಗ ಹಿಡಿಯುವವರಾದ ಇಪ್ಪತ್ತೈದು ಸಾವಿರದ ನೂರು ಮನುಷ್ಯರನ್ನು ನಾಶಮಾಡಿದರು.</verse>
				<verse number="36">ತಾವು ಸೋತುಹೋದೆವೆಂಬುದು ಹೀಗೆ ಬೆನ್ಯಾಮೀನ್ಯರಿಗೆ ಆಗ ತಿಳಿಯಿತು. ಏಕೆಂದರೆ ಇಸ್ರಾಯೇಲರು ಗಿಬೆಯದ ಹತ್ತಿರ ಹೊಂಚು ಹಾಕುವದಕ್ಕೆ ಇಟ್ಟ ಜನರನ್ನು ನಂಬಿದ್ದರು. ಆದುದರಿಂದ ತಮ್ಮ ಸ್ಥಳವನ್ನು ಬಿಟ್ಟು ಬೆನ್ಯಾಮೀನ್ಯರ ಮುಂದೆ ಓಡಿಹೋದರು.</verse>
				<verse number="37">ಆಗ ಹೊಂಚು ಹಾಕಿಕೊಂಡಿದ್ದವರು ತೀವ್ರವಾಗಿ ಗಿಬೆಯಕ್ಕೆ ಸಾಲಾಗಿ ಹೊರಟು, ಪಟ್ಟಣದಲ್ಲಿರುವವರೆಲ್ಲರನ್ನು ಖಡ್ಗದಿಂದ ಸಂಹರಿಸಿದರು.</verse>
				<verse number="38">ಇಸ್ರಾಯೇಲರು ಹೊಂಚು ಹಾಕಿಕೊಂಡಿದ್ದವರ ಸಂಗಡ ನೇಮಿಸಿಕೊಂಡ ಗುರುತೇನೆಂದರೆ, ಪಟ್ಟಣದಲ್ಲಿಂದ ಮಹಾ ದೊಡ್ಡ ಹೊಗೆಯನ್ನು ಏಳ ಮಾಡುವುದೇ.</verse>
				<verse number="39">ತದನಂತರ ಇಸ್ರಾಯೇಲರು ಪ್ರತಿದಾಳಿ ನಡೆಸಿದರು. ಬೆನ್ಯಾಮೀನ್ಯರು ಇಸ್ರಾಯೇಲರನ್ನು ಹೊಡೆಯುವುದಕ್ಕೆ ಪ್ರಾರಂಭಿಸಿ, ಅವರಲ್ಲಿ ಹೆಚ್ಚು ಕಡಿಮೆ ಮೂವತ್ತು ಜನರನ್ನು ಕೊಂದಾಗ, “ಮೊದಲು ಯುದ್ಧದಲ್ಲಿ ಆದ ಹಾಗೆ ನಿಶ್ಚಯವಾಗಿ ಅವರು ನಮ್ಮ ಮುಂದೆ ಸೋತುಹೋದರು,” ಎಂದು ಅಂದುಕೊಂಡರು.</verse>
				<verse number="40">ಆದರೆ ಪಟ್ಟಣದೊಳಗಿಂದ ಹೊಗೆಯ ಸ್ತಂಭ ಸಹಿತವಾಗಿ ಏಳುವುದಕ್ಕೆ ಪ್ರಾರಂಭಿಸಿತು. ಬೆನ್ಯಾಮೀನ್ಯರು ಹಿಂದಕ್ಕೆ ತಿರುಗಿ ನೋಡಿದಾಗ, ಪಟ್ಟಣದ ಜ್ವಾಲೆಯು ಆಕಾಶಕ್ಕೆ ಏರಿತು.</verse>
				<verse number="41">ಇಸ್ರಾಯೇಲರು ತಿರುಗಿಕೊಂಡು ಬಂದಾಗ, ಬೆನ್ಯಾಮೀನನ ಜನರು ತಲ್ಲಣಗೊಂಡರು, ಏಕೆಂದರೆ ಕೇಡು ತಮ್ಮ ಮೇಲೆ ಪ್ರಾಪ್ತವಾಯಿತೆಂದು ಕಂಡರು.</verse>
				<verse number="42">ಅವರು ಇಸ್ರಾಯೇಲರ ಮುಂದೆ ಮರುಭೂಮಿಯ ಮಾರ್ಗಕ್ಕೆ ತಿರುಗಿಕೊಂಡು ಹೋದರು. ಆದರೆ ಸೈನಿಕರು ಅವರನ್ನು ಹಿಡಿದು, ಪಟ್ಟಣದಿಂದ ಹೊರಟು ಬರುವ ಜನರನ್ನು ಮಧ್ಯದಲ್ಲೇ ಕೊಂದುಹಾಕಿದರು.</verse>
				<verse number="43">ಹೀಗೆ ಬೆನ್ಯಾಮೀನ್ಯರನ್ನು ಸುತ್ತಲೂ ಮುತ್ತಿಕೊಂಡು, ಅವರನ್ನು ಹಿಂದಟ್ಟಿ, ಗಿಬೆಯ ಊರಿನ ಪೂರ್ವದಿಕ್ಕಿನಲ್ಲಿ ಅವಕಾಶವಿಲ್ಲದೆ ತುಳಿದು ಹಾಕಿದರು.</verse>
				<verse number="44">ಬೆನ್ಯಾಮೀನ್ಯರಲ್ಲಿ ಹದಿನೆಂಟು ಸಾವಿರ ಜನರು ಸತ್ತರು. ಇವರೆಲ್ಲರೂ ಪರಾಕ್ರಮಶಾಲಿಗಳಾಗಿದ್ದರು.</verse>
				<verse number="45">ಆದರೆ ಕೆಲವರು ತಿರುಗಿಕೊಂಡು ಮರುಭೂಮಿಯಲ್ಲಿರುವ ರಿಮ್ಮೋನ್ ಬಂಡೆಗೆ ಓಡಿಹೋದರು. ಅದರಲ್ಲಿ ಐದು ಸಾವಿರ ಜನರನ್ನು ಹೆದ್ದಾರಿಗಳಲ್ಲಿ ಹಕ್ಕಲಾರಿಸಿ ಕೊಂದುಹಾಕಿದರು. ಉಳಿದವರನ್ನು ಗಿದೋಮಿನವರೆಗೆ ಹಿಂದಟ್ಟಿ ಅವರಲ್ಲಿ ಎರಡು ಸಾವಿರ ಮನುಷ್ಯರನ್ನು ವಧಿಸಿದರು.</verse>
				<verse number="46">ಹೀಗೆಯೇ ಬೆನ್ಯಾಮೀನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಖಡ್ಗ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆಲ್ಲರೂ ಪರಾಕ್ರಮಶಾಲಿಗಳಾಗಿದ್ದರು.</verse>
				<verse number="47">ಆದರೆ ಆರುನೂರು ಮಂದಿ ತಿರುಗಿಕೊಂಡು ಮರುಭೂಮಿಯಲ್ಲಿರುವ ರಿಮ್ಮೋನ್ ಬೆಟ್ಟಕ್ಕೆ ಓಡಿಹೋಗಿ, ರಿಮ್ಮೋನ್ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು.</verse>
				<verse number="48">ಇಸ್ರಾಯೇಲರು ಬೆನ್ಯಾಮೀನ್ಯರ ಮೇಲೆ ತಿರುಗಿ ಹೋಗಿ, ಪಟ್ಟಣದಲ್ಲಿ ಜನರನ್ನೂ, ಪಶುಗಳನ್ನೂ, ಕೈಗೆ ಸಿಕ್ಕಿದ್ದೆಲ್ಲವನ್ನೂ ಸಂಹರಿಸಿ, ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.</verse>
			</chapter>
			<chapter number="21">
				<verse number="1">ಇಸ್ರಾಯೇಲರು ತಮ್ಮಲ್ಲಿ, “ಯಾವನೂ ತನ್ನ ಮಗಳನ್ನು ಬೆನ್ಯಾಮೀನ್ಯರಿಗೆ ಮದುವೆಮಾಡಿ ಕೊಡುವುದಿಲ್ಲ,” ಎಂದು ಮಿಚ್ಪೆಯಲ್ಲಿ ಆಣೆಯಿಟ್ಟಿದ್ದರು.</verse>
				<verse number="2">ಆದ್ದರಿಂದ ಜನರು ಬೇತೇಲಿಗೆ ಬಂದು, ಅಲ್ಲಿ ದೇವರ ಮುಂದೆ ಸಾಯಂಕಾಲದವರೆಗೆ ಇದ್ದು, ತಮ್ಮ ಧ್ವನಿ ಎತ್ತಿ ಬಹಳವಾಗಿ ಅತ್ತು,</verse>
				<verse number="3">“ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ಈ ಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರ ಕೊರತೆಯಾದದ್ದೇನು?” ಎಂದರು.</verse>
				<verse number="4">ಜನರು ಮಾರನೆಯ ದಿವಸ ಉದಯದಲ್ಲಿ ಎದ್ದು, ಅಲ್ಲಿ ಬಲಿಪೀಠವನ್ನು ಕಟ್ಟಿ, ದಹನಬಲಿಗಳನ್ನೂ ಸಮಾಧಾನದ ಸಮರ್ಪಣೆಗಳನ್ನೂ ಅರ್ಪಿಸಿದರು.</verse>
				<verse number="5">ಅನಂತರ ಅವರು, “ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಬಾರದವರು ಯಾರು?” ಎಂದರು. ಏಕೆಂದರೆ ಯೆಹೋವ ದೇವರ ಬಳಿಗೆ ಮಿಚ್ಪೆಗೆ ಬಾರದವನು ಖಂಡಿತವಾಗಿ ಸಾಯಬೇಕೆಂದು ದೊಡ್ಡ ಆಣೆ ಇಟ್ಟುಕೊಂಡಿದ್ದರು.</verse>
				<verse number="6">ಆಗ ಇಸ್ರಾಯೇಲರು ತಮ್ಮ ಸಹೋದರರಾದ ಬೆನ್ಯಾಮೀನನ ವಿಷಯವಾಗಿ ಪಶ್ಚಾತ್ತಾಪಪಟ್ಟು, “ಈ ಹೊತ್ತು ಇಸ್ರಾಯೇಲಿನಲ್ಲಿ ಒಂದು ಗೋತ್ರವು ಕಡಿದು ಹೋಯಿತು.</verse>
				<verse number="7">ನಾವು ನಮ್ಮ ಪುತ್ರಿಯರಲ್ಲಿ ಒಬ್ಬಳನ್ನಾದರೂ ಅವರಿಗೆ ಕೊಡುವುದಿಲ್ಲ, ಎಂದು ನಾವು ಯೆಹೋವ ದೇವರ ಮೇಲೆ ಆಣೆ ಇಟ್ಟುಕೊಂಡದ್ದರಿಂದ ಉಳಿದವರಿಗೆ ಹೆಂಡರು ದೊರಕುವಂತೆ ನಾವು ಅವರಿಗೋಸ್ಕರ ಏನು ಮಾಡೋಣ?</verse>
				<verse number="8">ಇಸ್ರಾಯೇಲಿನ ಗೋತ್ರಗಳಲ್ಲಿ ಮಿಚ್ಪೆಗೆ ಯೆಹೋವ ದೇವರ ಬಳಿಗೆ ಬಾರದವರು ಯಾರಾದರೂ ಒಬ್ಬರಿದ್ದಾರೋ?” ಎಂದರು. ಆಗ, ಯಾಬೇಷ್ ಗಿಲ್ಯಾದಿನವರಲ್ಲಿ ಒಬ್ಬನಾದರೂ ಸಭೆಯ ಬಳಿಗೆ ಪಾಳೆಯಕ್ಕೆ ಬಂದಿರಲಿಲ್ಲ.</verse>
				<verse number="9">ಜನರು ಲೆಕ್ಕಿಸಿದಾಗ, ಯಾಬೇಷ್ ಗಿಲ್ಯಾದಿನವರಲ್ಲಿ ಒಬ್ಬನಾದರೂ ಇರಲಿಲ್ಲ.</verse>
				<verse number="10">ಆಗ ಸಭೆಯು ಪರಾಕ್ರಮಶಾಲಿಗಳಲ್ಲಿ ಹನ್ನೆರಡು ಸಾವಿರ ಮನುಷ್ಯರನ್ನು ಅಲ್ಲಿಗೆ ಕಳುಹಿಸುವಾಗ, ಅವರಿಗೆ, “ನೀವು ಹೋಗಿ, ಯಾಬೇಷ್ ಗಿಲ್ಯಾದಿನ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಕೂಡ, ಖಡ್ಗದಿಂದ ಸಂಹರಿಸಿಬಿಡಿರಿ.</verse>
				<verse number="11">ಎಲ್ಲಾ ಗಂಡಸರನ್ನೂ ಮದುವೆಯಾದ ಸ್ತ್ರೀಯರನ್ನೂ ನಿರ್ಮೂಲ ಮಾಡಿರಿ,” ಎಂದು ಆಜ್ಞಾಪಿಸಿದರು.</verse>
				<verse number="12">ಹಾಗೆಯೇ ಯಾಬೇಷ್ ಗಿಲ್ಯಾದಿನ ನಿವಾಸಿಗಳಲ್ಲಿ ನಾನೂರು ಮಂದಿ ಪ್ರಾಯದ ಕನ್ನಿಕೆಯರನ್ನು ಕಂಡರು. ಅವರು ಯಾವುದೇ ಪುರುಷರೊಂದಿಗೆ ಸಂಬಂಧ ಹೊಂದಿರಲಿಲ್ಲ. ಅವರನ್ನು ಕಾನಾನ್ ದೇಶದಲ್ಲಿರುವ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತಂದರು.</verse>
				<verse number="13">ಆಗ ಸಭೆಯವರೆಲ್ಲರೂ ರಿಮ್ಮೋನ್ ಗುಡ್ಡದಲ್ಲಿರುವ ಬೆನ್ಯಾಮೀನ್ಯರ ಸಂಗಡ ಮಾತನಾಡಿ, ಅವರಿಗೆ ಸಮಾಧಾನವನ್ನು ಸಾರಲು ಕೆಲವರನ್ನು ಕಳುಹಿಸಿದರು.</verse>
				<verse number="14">ಆ ಕಾಲದಲ್ಲಿ ಬೆನ್ಯಾಮೀನ್ಯರು ತಿರುಗಿ ಅವರ ಬಳಿಗೆ ಬಂದರು. ಅವರು ಯಾಬೇಷ್ ಗಿಲ್ಯಾದಿನ ಸ್ತ್ರೀಯರಲ್ಲಿ ಜೀವದಿಂದ ಉಳಿಸಿದ ಕನ್ನಿಕೆಯರನ್ನು ಅವರಿಗೆ ಹೆಂಡತಿಯರಾಗಿ ಕೊಟ್ಟರು. ಆದರೂ ಅವರಿಗೆ ತಕ್ಕಷ್ಟು ಹೆಂಡತಿಯರು ಸಿಕ್ಕಲಿಲ್ಲ.</verse>
				<verse number="15">ಯೆಹೋವ ದೇವರು ಇಸ್ರಾಯೇಲ್ ಗೋತ್ರಗಳಲ್ಲಿ ಬೆನ್ಯಾಮೀನರನ್ನು ಬೇರ್ಪಡಿಸಿದ್ದರಿಂದ ಜನರು ಬೆನ್ಯಾಮೀನರಿಗಾಗಿ ಪಶ್ಚಾತ್ತಾಪ ಪಟ್ಟರು.</verse>
				<verse number="16">ಸಮೂಹದ ಹಿರಿಯರು, “ಬೆನ್ಯಾಮೀನನ ಗೋತ್ರದ ಸ್ತ್ರೀಯರು ನಾಶವಾದದ್ದರಿಂದ ಉಳಿದ ಜನರಿಗೆ ಹೆಂಡತಿಯರು ದೊರಕುವುದಕ್ಕಾಗಿ ಏನು ಮಾಡೋಣ?</verse>
				<verse number="17">ಇಸ್ರಾಯೇಲಿನಲ್ಲಿ ಒಂದು ಗೋತ್ರವು ಅಳಿದು ಹೋಗದ ಹಾಗೆ ತಪ್ಪಿಸಿಕೊಂಡ ಬೆನ್ಯಾಮೀನ್ಯರಿಗೆ ಬಾಧ್ಯತೆ ಇರಬೇಕು.</verse>
				<verse number="18">‘ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣು ಕೊಡುವ ಇಸ್ರಾಯೇಲ್ಯರು ಶಾಪಗ್ರಸ್ತರಾಗಲಿ,’ ಎಂದು ಆಣೆ ಇಟ್ಟುಕೊಂಡಿದ್ದರಿಂದ, ನಾವಾದರೋ ನಮ್ಮ ಪುತ್ರಿಯರಲ್ಲಿ ಅವರಿಗೆ ಹೆಣ್ಣು ಕೊಡಕೂಡದು,” ಎಂದರು.</verse>
				<verse number="19">ಅವರು ಬೇತೇಲಿಗೆ ಉತ್ತರದಲ್ಲಿಯೂ, ಬೇತೇಲಿನಿಂದ ಶೆಕೆಮಿಗೆ ಹೋಗುವ ಹೆದ್ದಾರಿಯ ಮೂಡಲಲ್ಲಿಯೂ ಲೆಬೋನಕ್ಕೆ ದಕ್ಷಿಣದಲ್ಲಿರುವ ಶೀಲೋವಿನಲ್ಲಿ ಪ್ರತಿವರ್ಷ ಯೆಹೋವ ದೇವರ ಹಬ್ಬವುಂಟೆಂದು ಹೇಳಿದರು.</verse>
				<verse number="20">ಅವರು ಬೆನ್ಯಾಮೀನ್ಯರಿಗೆ, “ನೀವು ಹೋಗಿ ದ್ರಾಕ್ಷಿತೋಟಗಳಲ್ಲಿ ಅಡಗಿಕೊಳ್ಳಿರಿ.</verse>
				<verse number="21">ಶೀಲೋವಿನ ಪುತ್ರಿಯರು ನಾಟ್ಯವಾಡುತ್ತಾ ಹೊರಟು ಬರುವರು. ನೀವು ಅವರನ್ನು ಕಂಡಾಗ, ದ್ರಾಕ್ಷಿ ತೋಟಗಳಿಂದ ಹೊರಟು, ಶೀಲೋವಿನ ಪುತ್ರಿಯರಲ್ಲಿ ನಿಮ್ಮಲ್ಲಿ ಅವನವನು ತನಗೆ ಹೆಂಡತಿಯಾಗಿ ಒಬ್ಬೊಬ್ಬಳನ್ನು ಹಿಡಿದುಕೊಂಡು, ಬೆನ್ಯಾಮೀನನ ದೇಶಕ್ಕೆ ಹೋಗಿರಿ,” ಎಂದು ಆಜ್ಞಾಪಿಸಿದರು.</verse>
				<verse number="22">ಅವರ ತಂದೆಗಳಾದರೂ, ಅವರ ಸಹೋದರರಾದರೂ ನಮ್ಮ ಸಂಗಡ ವ್ಯಾಜ್ಯವಾಡುವುದಕ್ಕೆ ಬಂದರೆ, ನಾವು ಅವರಿಗೆ, “ಯುದ್ಧದಲ್ಲಿ ನಾವು ಅವನವನಿಗೆ ಹೆಂಡತಿಯನ್ನು ದೊರಕಿಸಿದ ಕಾರಣ, ನಮಗೋಸ್ಕರ ಅವರ ಮೇಲೆ ದಯೆ ತೋರಿಸಿರಿ. ಏಕೆಂದರೆ ನೀವು ಈ ಸಮಯದಲ್ಲಿ ಅವರಿಗೆ ಕೊಟ್ಟು ಅಪರಾಧಸ್ಥರಾಗಲಿಲ್ಲ ಎಂಬದಾಗಿ ಹೇಳುತ್ತೇವೆ,” ಎಂದರು.</verse>
				<verse number="23">ಆಗ ಬೆನ್ಯಾಮೀನ್ಯರು ಅದೇ ಪ್ರಕಾರಮಾಡಿ, ನಾಟ್ಯವಾಡುವ ಹೆಣ್ಣುಗಳಲ್ಲಿ ತಮ್ಮ ಲೆಕ್ಕಕ್ಕೆ ಸರಿಯಾಗಿ ಹಿಡಿದುಕೊಂಡವರನ್ನು ಅವನವನು ತನಗೆ ಹೆಂಡತಿಯಾಗಿ ತೆಗೆದುಕೊಂಡು, ತಮ್ಮ ಬಾಧ್ಯತೆಗೆ ತಿರುಗಿಕೊಂಡು ಹೋಗಿ, ಪಟ್ಟಣಗಳನ್ನು ಕಟ್ಟಿ, ಅವುಗಳಲ್ಲಿ ವಾಸಿಸಿದರು.</verse>
				<verse number="24">ಇಸ್ರಾಯೇಲರು ಆ ಕಾಲದಲ್ಲಿ ಆ ಸ್ಥಳವನ್ನು ಬಿಟ್ಟು, ತಮ್ಮ ತಮ್ಮ ಗೋತ್ರಕ್ಕೂ, ತಮ್ಮ ತಮ್ಮ ಕುಟುಂಬಕ್ಕೂ ಹೋದರು. ಅಲ್ಲಿಂದ ಒಬ್ಬೊಬ್ಬನು ತನ್ನ ಬಾಧ್ಯತೆಗೆ ಹೊರಟುಹೋದನು.</verse>
				<verse number="25">ಆ ದಿವಸಗಳಲ್ಲಿ ಇಸ್ರಾಯೇಲಿನಲ್ಲಿ ಅರಸನು ಇರಲಿಲ್ಲ. ಒಬ್ಬೊಬ್ಬನು ತನ್ನ ದೃಷ್ಟಿಗೆ ಸರಿಯಾಗಿ ತೋಚಿದ್ದನ್ನು ಮಾಡುತ್ತಿದ್ದನು.</verse>
			</chapter>
		</book>
		<book number="8">
			<chapter number="1">
				<verse number="1">ನ್ಯಾಯಸ್ಥಾಪಕರು ಆಳುತ್ತಿದ್ದ ಆ ದಿನಗಳಲ್ಲಿ ಇಸ್ರಾಯೇಲ್ ದೇಶದೊಳಗೆ ಬರ ಉಂಟಾಗಿದ್ದಾಗ, ಯೆಹೂದದ ಬೇತ್ಲೆಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡತಿ ಮತ್ತು ತನ್ನ ಇಬ್ಬರು ಪುತ್ರರೊಂದಿಗೆ ಮೋವಾಬ್ ದೇಶದಲ್ಲಿ ಸ್ವಲ್ಪ ಕಾಲ ವಾಸಮಾಡಬೇಕೆಂದು ಹೋದನು.</verse>
				<verse number="2">ಆ ಮನುಷ್ಯನ ಹೆಸರು ಎಲೀಮೆಲೆಕನು. ಅವನ ಹೆಂಡತಿಯ ಹೆಸರು ನೊವೊಮಿ. ಅವನ ಪುತ್ರರಲ್ಲಿ ಒಬ್ಬನ ಹೆಸರು ಮಹ್ಲೋನನು, ಮತ್ತೊಬ್ಬನ ಹೆಸರು ಕಿಲ್ಯೋನನು. ಯೆಹೂದ ದೇಶಕ್ಕೆ ಸೇರಿದ ಎಫ್ರಾತದಲ್ಲಿರುವ ಬೇತ್ಲೆಹೇಮಿನವರಾದ ಇವರು ಬಂದು ಮೋವಾಬ್ ದೇಶದಲ್ಲಿ ವಾಸವಾಗಿದ್ದರು.</verse>
				<verse number="3">ಆದರೆ ನೊವೊಮಿಯ ಗಂಡನಾದ ಎಲೀಮೆಲೆಕನು ಸತ್ತುಹೋದನು. ಆಕೆಯೂ ಆಕೆಯ ಇಬ್ಬರು ಪುತ್ರರೂ ಉಳಿದರು.</verse>
				<verse number="4">ಇವರು ಒರ್ಫಾ, ರೂತ್ ಎಂಬ ಹೆಸರುಗಳುಳ್ಳ ಇಬ್ಬರು ಮೋವಾಬ್ ದೇಶದ ಸ್ತ್ರೀಯರನ್ನು ಮದುವೆಮಾಡಿಕೊಂಡು ಸುಮಾರು ಹತ್ತು ವರುಷ ಅಲ್ಲಿ ವಾಸವಾಗಿದ್ದರು.</verse>
				<verse number="5">ಅಲ್ಲಿಯೇ ಮಹ್ಲೋನ ಮತ್ತು ಕಿಲ್ಯೋನ ಇಬ್ಬರೂ ಸತ್ತುಹೋದರು. ಆ ಸ್ತ್ರೀಯು ತನ್ನ ಇಬ್ಬರು ಪುತ್ರರನ್ನೂ ತನ್ನ ಗಂಡನನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು.</verse>
				<verse number="6">ಯೆಹೋವ ದೇವರು ತಮ್ಮ ಜನರಿಗೆ ರೊಟ್ಟಿಯನ್ನು ಕೊಡುವ ಹಾಗೆ ಅವರನ್ನು ದರ್ಶಿಸಿದರೆಂದು ಅವಳು ಮೋವಾಬ್ ದೇಶದಲ್ಲಿ ಕೇಳಿದ್ದರಿಂದ ಅವಳು ತನ್ನ ಸೊಸೆಯರ ಸಂಗಡ ಮೋವಾಬ್ ದೇಶದಿಂದ ಸ್ವದೇಶಕ್ಕೆ ಹೋಗಬೇಕೆಂದು ನಿರ್ಧರಿಸಿದಳು.</verse>
				<verse number="7">ಆಕೆಯು ಇಬ್ಬರು ಸೊಸೆಯರೊಡನೆ ತಾನಿದ್ದ ಸ್ಥಳದಿಂದ ಯೆಹೂದ ದೇಶಕ್ಕೆ ಹೋಗಬೇಕೆಂದು ಹೊರಟಳು.</verse>
				<verse number="8">ನೊವೊಮಿಯು ತನ್ನ ಇಬ್ಬರು ಸೊಸೆಯರಿಗೆ, “ನೀವು ನಿಮ್ಮ ನಿಮ್ಮ ತಾಯಿಯ ಮನೆಗೆ ತಿರುಗಿ ಹೋಗಿರಿ. ನೀವು ಮರಣ ಹೊಂದಿದ ಪತಿಯರಿಗೂ ನನಗೂ ದಯೆ ತೋರಿಸಿದ ಹಾಗೆಯೇ ಯೆಹೋವ ದೇವರು ನಿಮಗೆ ದಯೆ ತೋರಲಿ.</verse>
				<verse number="9">ನೀವು ಮದುವೆಯಾಗಿ ನಿಮ್ಮ ಗಂಡನ ಮನೆಯಲ್ಲಿ ವಿಶ್ರಾಂತಿ ಹೊಂದುವಂತೆ, ಯೆಹೋವ ದೇವರು ಆಶೀರ್ವದಿಸಲಿ,” ಎಂದು ಹೇಳಿದಳು. ನಂತರ ನೊವೊಮಿಯು ಅವರಿಗೆ ಮುದ್ದಿಟ್ಟಳು.</verse>
				<verse number="10">ಆಗ ಅವರು ಗಟ್ಟಿಯಾಗಿ ಅತ್ತು ಆಕೆಗೆ, “ನಿಶ್ಚಯವಾಗಿ ನಿಮ್ಮ ಜನರ ಬಳಿಗೆ ನಿಮ್ಮ ಸಂಗಡ ತಿರುಗಿ ಬರುತ್ತೇವೆ,” ಎಂದರು.</verse>
				<verse number="11">ಅದಕ್ಕೆ ನೊವೊಮಿಯು, “ಬೇಡ ನನ್ನ ಮಕ್ಕಳೇ, ನೀವು ಹಿಂತಿರುಗಿ ಹೋಗಿರಿ. ನನ್ನ ಸಂಗಡ ಏಕೆ ಬರುತ್ತೀರಿ? ನಿಮಗೆ ಗಂಡಂದಿರಾಗುವ ಹಾಗೆ ಇನ್ನು ಮುಂದೆ ನನ್ನ ಗರ್ಭದಲ್ಲಿ ನನಗೆ ಪುತ್ರರಾಗುವರೋ?</verse>
				<verse number="12">ನನ್ನ ಮಕ್ಕಳೇ, ನೀವು ನಿಮ್ಮ ಮನೆಗೆ ಹಿಂದಿರುಗಿ ಹೋಗಿರಿ. ಏಕೆಂದರೆ ನಾನು ಪುನಃ ಮದುವೆಮಾಡಿಕೊಳ್ಳುವ ಪ್ರಾಯ ನನಗೆ ದಾಟಿಹೋಗಿದೆ. ಒಂದು ವೇಳೆ, ನಾನು ಸಂತಾನವಾಗುವ ನಿರೀಕ್ಷೆಯಿಂದ ಈ ಹೊತ್ತೇ ಮದುವೆಯಾಗಿ ಮಕ್ಕಳನ್ನು ಹೆತ್ತರೂ,</verse>
				<verse number="13">ಅವರು ದೊಡ್ಡವರಾಗುವವರೆಗೂ ಕಾದು ಕೊಳ್ಳುವಿರೋ? ಗಂಡನಿಲ್ಲದೆ ನೀವು ತಾಳಿಕೊಂಡಿರುವಿರೋ? ಇಲ್ಲ, ನನ್ನ ಮಕ್ಕಳೇ; ಯೆಹೋವ ದೇವರ ಹಸ್ತವು ನನಗೆ ವಿರೋಧವಾಗಿದೆ. ಆದ್ದರಿಂದ ನಿಮಗಿಂತ ನನಗೆ ಬಹು ದುಃಖವಾಗಿದೆ,” ಎಂದಳು.</verse>
				<verse number="14">ಆಗ ಅವರು ತಿರುಗಿ ಗಟ್ಟಿಯಾದ ಸ್ವರದಿಂದ ಅತ್ತರು. ಒರ್ಫಾ ತನ್ನ ಅತ್ತೆಯನ್ನು ಮುದ್ದಿಟ್ಟು ಹೊರಟು ಹೋದಳು; ಆದರೆ ರೂತಳು ಅತ್ತೆಯನ್ನು ಅಂಟಿಕೊಂಡಳು.</verse>
				<verse number="15">ಆಗ ನೊವೊಮಿ, “ಇಗೋ, ನಿನ್ನ ಓರಗಿತ್ತಿಯು ತನ್ನ ಜನರ ಬಳಿಗೂ ತನ್ನ ದೇವರುಗಳ ಬಳಿಗೂ ತಿರುಗಿ ಹೋದಳು. ನೀನೂ ನಿನ್ನ ಓರಗಿತ್ತಿಯ ಹಿಂದೆ ಹೋಗು,” ಎಂದಳು.</verse>
				<verse number="16">ಅದಕ್ಕೆ ರೂತಳು, “ನಿಮ್ಮನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಮಾಡಬೇಡಿರಿ. ಏಕೆಂದರೆ ನೀವು ಎಲ್ಲಿ ಹೋಗುವಿರೋ ನಾನು ಅಲ್ಲಿಗೇ ಬರುವೆನು. ನೀವು ಎಲ್ಲಿ ಇಳುಕೊಳ್ಳುವಿರೋ ನಾನು ಅಲ್ಲಿ ಇಳುಕೊಳ್ಳುವೆನು. ನಿಮ್ಮ ಜನರೇ ನನ್ನ ಜನರು; ನಿಮ್ಮ ದೇವರೇ ನನ್ನ ದೇವರು.</verse>
				<verse number="17">ನೀವು ಎಲ್ಲಿ ಸಾಯುತ್ತೀರೋ ಅಲ್ಲಿಯೇ ನಾನು ಸಾಯುವೆನು. ಅಲ್ಲಿಯೇ ನನಗೆ ಸಮಾಧಿಯಾಗಲಿ. ಮರಣದಿಂದಲ್ಲದೆ ನಾನು ನಿಮ್ಮನ್ನು ಅಗಲಿದರೆ ಯೆಹೋವ ದೇವರು ನನಗೆ ಬೇಕಾದದ್ದನ್ನು ಮಾಡಲಿ,” ಎಂದಳು.</verse>
				<verse number="18">ರೂತಳು ತನ್ನ ಸಂಗಡ ಬರಲು ದೃಢವಾದ ಮನಸ್ಸು ಮಾಡಿಕೊಂಡಿದ್ದಾಳೆಂದು ನೊವೊಮಿ ತಿಳಿದು ಸುಮ್ಮನಾದಳು.</verse>
				<verse number="19">ಹಾಗೆಯೇ ಇಬ್ಬರೂ ಬೇತ್ಲೆಹೇಮಿನವರೆಗೂ ನಡೆದುಹೋದರು. ಅವರು ಬೇತ್ಲೆಹೇಮಿನಲ್ಲಿ ಪ್ರವೇಶಿಸುವಾಗ ಆ ಪಟ್ಟಣದವರಲ್ಲಿ ಕುತೂಹಲ ಮೂಡಿಸಿತು. ಅವರು, “ಇವಳು ನೊವೊಮಿಯೋ?” ಎಂದರು.</verse>
				<verse number="20">ಆಗ ಆಕೆಯು ಅವರಿಗೆ, “ನನ್ನನ್ನು ‘ನೊವೊಮಿ’ ಎಂದು ಕರೆಯಬೇಡಿರಿ. ಮಾರಾ ಎಂದು ಕರೆಯಿರಿ ಏಕೆಂದರೆ ಸರ್ವಶಕ್ತರು ನನ್ನನ್ನು ಬಹು ದುಃಖದಿಂದ ನಡೆಸಿದರು.</verse>
				<verse number="21">ನಾನು ಪರಿಪೂರ್ಣಳಾಗಿ ಹೊರಟುಹೋದೆನು. ಯೆಹೋವ ದೇವರು ನನ್ನನ್ನು ಏನೂ ಇಲ್ಲದೆ ಬರಮಾಡಿದ್ದಾರೆ. ಯೆಹೋವ ದೇವರು ನನಗೆ ವಿರೋಧವಾಗಿ ಸಾಕ್ಷಿಕೊಟ್ಟು, ಸರ್ವಶಕ್ತರಾದ ದೇವರು ನನಗೆ ವಿರೋಧವಾಗಿ ನನ್ನನ್ನು ಬಾಧಿಸಿರುವುದರಿಂದ ನೀವು ನನ್ನನ್ನು ನೊವೊಮಿ ಎಂದು ಕರೆಯುವುದು ಸರಿಯೇ?” ಎಂದಳು.</verse>
				<verse number="22">ಹೀಗೆ ನೊವೊಮಿ ಮೋವಾಬ್ ದೇಶಸ್ಥಳಾದ ರೂತಳೆಂಬ ತನ್ನ ಸೊಸೆಯ ಸಂಗಡ ಮೋವಾಬ್ ದೇಶದಿಂದ ತಿರುಗಿಬಂದಳು. ಅವರು ಜವೆಗೋಧಿಯ ಸುಗ್ಗಿಯ ಕಾಲ ಪ್ರಾರಂಭವಾದಾಗ ಬೇತ್ಲೆಹೇಮಿಗೆ ತಲುಪಿದರು.</verse>
			</chapter>
			<chapter number="2">
				<verse number="1">ನೊವೊಮಿಯ ಗಂಡ ಎಲೀಮೆಲೆಕನ ಗೋತ್ರದಲ್ಲಿ ಬೋವಜ ಎಂಬ ಹೆಸರುಳ್ಳ ಪ್ರಬಲ ಮತ್ತು ಧನವಂತನಾಗಿರುವ ಬಂಧುವಿದ್ದನು.</verse>
				<verse number="2">ಮೋವಾಬ್ಯಳಾದ ರೂತಳು ನೊವೊಮಿಗೆ, “ನಾನು ಹೊಲಕ್ಕೆ ಹೋಗಿ ಯಾರ ದಯೆಯು ನನಗೆ ಆಗುವುದೋ ಅವನ ಹೊಲದಲ್ಲಿ ಹಕ್ಕಲ ತೆನೆಗಳನ್ನು ಕೂಡಿಸಿ ಕೊಳ್ಳುವೆನು,” ಎಂದಳು. ನೊವೊಮಿ, “ಹೋಗಿ ಬಾ, ಮಗಳೇ,” ಎಂದಳು.</verse>
				<verse number="3">ರೂತಳು ಹೊಲದಲ್ಲಿ ಕೊಯ್ಯುವವರ ಹಿಂದೆ ಹೋಗಿ ತೆನೆಗಳನ್ನು ಆಯ್ದುಕೊಳ್ಳುತ್ತಿದ್ದಳು. ಆ ಹೊಲದ ಭಾಗ ಎಲೀಮೆಲೆಕನ ಕುಲದವನಾದ ಬೋವಜನದಾಗಿತ್ತು.</verse>
				<verse number="4">ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ, “ಯೆಹೋವ ದೇವರು ನಿಮ್ಮ ಸಂಗಡ ಇರಲಿ,” ಎಂದನು. ಅದಕ್ಕೆ ಅವರು, “ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,” ಎಂದರು.</verse>
				<verse number="5">ಬೋವಜನು ಕೊಯ್ಯುವವರ ಮೇಲೆ ಮೇಲ್ವಿಚಾರಕನಾಗಿದ್ದ ತನ್ನ ಸೇವಕನಿಗೆ, “ಈ ಯುವತಿ ಯಾರು?” ಎಂದನು.</verse>
				<verse number="6">ಅದಕ್ಕೆ ಆ ಮೇಲ್ವಿಚಾರಕನು, “ಇವಳು ಮೋವಾಬ್ ಸೀಮೆಯಿಂದ ನೊವೊಮಿಯ ಸಂಗಡ ಹಿಂದಿರುಗಿ ಬಂದ ಮೋವಾಬಿನ ಯುವತಿ.</verse>
				<verse number="7">ಇವಳು, ‘ಕೊಯ್ಯುವವರ ಹಿಂದೆ ಹೋಗಿ ಸಿವುಡುಗಳ ನಡುವೆ ನಾನು ಹಕ್ಕಲಾರಿಸಿಕೊಳ್ಳುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಕೇಳಿಕೊಂಡಳು. ಸ್ವಲ್ಪ ಸಮಯ ನೆರಳಿನಲ್ಲಿ ವಿಶ್ರಮಿಸಿಕೊಂಡು, ಬೆಳಗಿನಿಂದ ಈವರೆಗೂ ಇಲ್ಲಿಯೇ ಇದ್ದಾಳೆ,” ಎಂದನು.</verse>
				<verse number="8">ಆಗ ಬೋವಜನು ರೂತಳಿಗೆ, “ನನ್ನ ಮಗಳೇ, ನನ್ನ ಮಾತನ್ನು ಕೇಳು. ನೀನು ಹಕ್ಕಲಾದುಕೊಳ್ಳಲು ಬೇರೆಯವರ ಹೊಲಕ್ಕೆ ಹೋಗದೆ, ಈ ಸ್ಥಳವನ್ನು ಬಿಟ್ಟು ಹೊರಡದೆ, ಇಲ್ಲಿಯೇ ನನ್ನ ದಾಸಿಗಳ ಜೊತೆಯಲ್ಲಿಯೇ ಇರು.</verse>
				<verse number="9">ನಿನ್ನ ಕಣ್ಣುಗಳು ಅವರು ಕೊಯ್ಯುವ ಹೊಲದ ಮೇಲೆ ಇರಲಿ. ಅವರ ಹಿಂದೆಯೇ ಹೋಗು, ಯಾರೂ ನಿನ್ನನ್ನು ಮುಟ್ಟದಹಾಗೆ ಅವರಿಗೆ ಆಜ್ಞಾಪಿಸಿದ್ದೇನೆ. ನಿನಗೆ ದಾಹವಾದರೆ ನೀನು ಪಾತ್ರೆಗಳ ಬಳಿಗೆ ಹೋಗಿ ನನ್ನ ಸೇವಕರು ಸೇದಿಟ್ಟ ನೀರನ್ನು ಕುಡಿ,” ಎಂದನು.</verse>
				<verse number="10">ಆಗ ಅವಳು ಅವನಿಗೆ ಸಾಷ್ಟಾಂಗಬಿದ್ದು ವಂದಿಸಿ ಅವನಿಗೆ, “ಪರದೇಶಿಯಾದ ನನ್ನನ್ನು ಕಂಡು ನನ್ನ ಮೇಲೆ ನಿಮ್ಮ ದಯೆಯನ್ನು ತೋರಿಸಿದ್ದು ಏಕೆ?” ಎಂದಳು.</verse>
				<verse number="11">ಆಗ ಬೋವಜನು ಅವಳಿಗೆ ಉತ್ತರವಾಗಿ, “ನಿನ್ನ ಗಂಡನು ಸತ್ತ ತರುವಾಯ ನೀನು ನಿನ್ನ ಅತ್ತೆಗೋಸ್ಕರ ಮಾಡಿದ್ದೆಲ್ಲವೂ ನೀನು ನಿನ್ನ ತಂದೆತಾಯಿಗಳನ್ನೂ ನೀನು ಹುಟ್ಟಿದ ದೇಶವನ್ನೂ ಬಿಟ್ಟು ನೀನು ಎಂದಿಗೂ ಅರಿಯದ ಜನರ ಬಳಿಗೆ ಬಂದದ್ದೂ ನನಗೆ ಚೆನ್ನಾಗಿ ತಿಳಿದಿದೆ.</verse>
				<verse number="12">ನೀನು ಮಾಡಿದ್ದಕ್ಕೆ ಯೆಹೋವ ದೇವರು ನಿನಗೆ ಬದಲು ಕೊಡಲಿ. ಇಸ್ರಾಯೇಲ್ ದೇವರಾದ ಯೆಹೋವ ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಅವರಿಂದ ದೊಡ್ಡ ಪ್ರತಿಫಲ ಅನುಗ್ರಹಿಸಲಿ,” ಎಂದನು.</verse>
				<verse number="13">ಅದಕ್ಕೆ ಅವಳು, “ನನ್ನ ಒಡೆಯನೇ, ನನಗೆ ನಿಮ್ಮ ದೃಷ್ಟಿಯಲ್ಲಿ ಉಪಕಾರವಾಗಲಿ. ಏಕೆಂದರೆ ನಾನು ನಿಮ್ಮ ದಾಸಿಯರಲ್ಲಿ ಒಬ್ಬಳಂತೆ ನಿಲ್ಲುವುದಕ್ಕೂ ಯೋಗ್ಯಳಲ್ಲ ಆದರೂ ದಯೆಯಿಂದ ಮಾತನಾಡಿಸಿದಿರಿ” ಎಂದಳು.</verse>
				<verse number="14">ಊಟದ ವೇಳೆಯಲ್ಲಿ ಬೋವಜನು ಅವಳಿಗೆ, “ಇಲ್ಲಿ ಹತ್ತಿರ ಬಂದು ರೊಟ್ಟಿ ತಿಂದು ತುತ್ತನ್ನು ಹುಳಿರಸದಲ್ಲಿ ಅದ್ದಿ ತಿನ್ನು,” ಎಂದನು. ಅವಳು ಕೊಯ್ಯುವವರ ಬಳಿಯಲ್ಲಿ ಕುಳಿತಳು. ಆಗ ಅವನು ಅವಳಿಗೆ ಹುರಿದ ತೆನೆಯನ್ನು ಕೊಟ್ಟನು. ಅವಳು ತಿಂದು ತೃಪ್ತಿಪಟ್ಟು, ಇನ್ನೂ ಉಳಿಸಿಕೊಂಡಳು.</verse>
				<verse number="15">ಅವಳು ಹಕ್ಕಲಾದುಕೊಳ್ಳಲು ಏಳುವಾಗ ಬೋವಜನು ತನ್ನ ಸೇವಕರಿಗೆ ಆಜ್ಞಾಪಿಸಿ, “ಇವಳು ಕೊಯ್ದ ಸಿವುಡುಗಳ ಮಧ್ಯದಲ್ಲಿ ಹಕ್ಕಲಾದುಕೊಳ್ಳಲಿ. ನೀವು ಅವಳನ್ನು ಬೈಯಬೇಡಿರಿ.</verse>
				<verse number="16">ಅವಳು ಹಕ್ಕಲಾದುಕೊಳ್ಳುವ ಹಾಗೆ ನೀವು ಅವಳಿಗೋಸ್ಕರ ಸಿವುಡುಗಳಲ್ಲಿ ಕೆಲವನ್ನು ಕೆಳಗೆ ಹಾಕಿರಿ. ಅವಳನ್ನು ಗದರಿಸಬೇಡಿರಿ,” ಎಂದನು.</verse>
				<verse number="17">ಹಾಗೆಯೇ ಅವಳು ಸಾಯಂಕಾಲದವರೆಗೂ ಹೊಲದಲ್ಲಿ ಹಕ್ಕಲಾದುಕೊಂಡಳು. ಅವಳು ಹಕ್ಕಲಾದುಕೊಂಡದ್ದನ್ನು ಬಡಿದಾಗ ಅದು ಹೆಚ್ಚು ಕಡಿಮೆ ಮೂವತ್ತು ಕಿಲೋಗ್ರಾಂ ಜವೆಗೋಧಿಯಾಗಿತ್ತು.</verse>
				<verse number="18">ಅವಳು ಅದನ್ನು ತೆಗೆದುಕೊಂಡು ಪಟ್ಟಣಕ್ಕೆ ಬಂದಳು. ಅವಳು ಹಕ್ಕಲಾದುಕೊಂಡಿದ್ದನ್ನು ಅವಳ ಅತ್ತೆಯು ಕಂಡಳು. ರೂತಳು ತೃಪ್ತಿಯಾದ ಮೇಲೆ ಉಳಿಸಿ ತಂದದ್ದನ್ನು ಅವಳಿಗೆ ಕೊಟ್ಟಳು.</verse>
				<verse number="19">ಆಗ ರೂತಳ ಅತ್ತೆಯು ಆಕೆಗೆ, “ನೀನು ಈ ಹೊತ್ತು ಎಲ್ಲಿ ಹಕ್ಕಲಾದುಕೊಂಡೆ? ಎಲ್ಲಿ ಕೆಲಸಮಾಡಿದೆ? ನಿನ್ನನ್ನು ಪರಾಮರಿಸಿದವನಿಗೆ ಆಶೀರ್ವಾದವಾಗಲಿ,” ಎಂದಳು. ಅದಕ್ಕವಳು ತಾನು ಯಾರ ಹತ್ತಿರ ಕೆಲಸಮಾಡಿದಳೋ ಅದನ್ನು ತನ್ನ ಅತ್ತೆಗೆ ತಿಳಿಸಿ, “ನಾನು ಈ ಹೊತ್ತು ಕೆಲಸ ಮಾಡಿದವನ ಹೆಸರು ಬೋವಜ,” ಎಂದು ಹೇಳಿದಳು.</verse>
				<verse number="20">ನೊವೊಮಿ ತನ್ನ ಸೊಸೆಗೆ, “ಜೀವಂತ ಇರುವವರಿಗೂ ಸತ್ತವರಿಗೂ ದಯೆ ತೋರಿಸುತ್ತಿರುವ ಯೆಹೋವ ದೇವರಿಂದ ಅವನಿಗೆ ಆಶೀರ್ವಾದವಾಗಲಿ,” ಎಂದಳು. ಅನಂತರ ನೊವೊಮಿ ಅವಳಿಗೆ, “ಆ ಮನುಷ್ಯನು ನಮ್ಮ ಬಂಧುವೂ ವಿಮೋಚಿಸತಕ್ಕ ನಮ್ಮ ಬಾಧ್ಯರಲ್ಲಿ ಒಬ್ಬನಾಗಿಯೂ ಇದ್ದಾನೆ,” ಎಂದಳು.</verse>
				<verse number="21">ಅದಕ್ಕೆ ಮೋವಾಬ್ಯಳಾದ ರೂತಳು, “ಅವನು, ‘ನನ್ನ ಪೈರೆಲ್ಲಾ ಕೊಯ್ದು ತೀರುವವರೆಗೂ, ನೀನು ನನ್ನ ಕೆಲಸದವರ ಸಂಗಡ ಕೂಡಿಕೊಂಡಿರು’ ಎಂದು ನನಗೆ ಹೇಳಿದನು,” ಎಂದಳು.</verse>
				<verse number="22">ಆಗ ನೊವೊಮಿಯು ತನ್ನ ಸೊಸೆಯಾದ ರೂತಳಿಗೆ, “ನನ್ನ ಮಗಳೇ, ಮತ್ತೊಂದು ಹೊಲದಲ್ಲಿ ಮನುಷ್ಯರು ನಿನ್ನನ್ನು ಕಂಡುಕೊಳ್ಳದ ಹಾಗೆ ನೀನು ಅವನ ದಾಸಿಗಳ ಸಂಗಡ ಹೊರಟುಹೋಗುವುದು ಒಳ್ಳೆಯದು,” ಎಂದಳು.</verse>
				<verse number="23">ಹೀಗೆ ಅವಳು ತನ್ನ ಅತ್ತೆಯ ಮನೆಯಲ್ಲಿ ವಾಸವಾಗಿದ್ದು ಹಾಗೆಯೇ ಜವೆಗೋಧಿಯ ಸುಗ್ಗಿಯು ತೀರುವವರೆಗೆ ಹಕ್ಕಲಾದುಕೊಳ್ಳುವುದಕ್ಕೋಸ್ಕರ ಬೋವಜನ ದಾಸಿಗಳ ಸಂಗಡ ಕೂಡಿಕೊಂಡು ಹೋಗುತ್ತಿದ್ದಳು.</verse>
			</chapter>
			<chapter number="3">
				<verse number="1">ಒಂದು ದಿನ ರೂತಳ ಅತ್ತೆ ನೊವೊಮಿಯು ಅವಳಿಗೆ, “ನನ್ನ ಮಗಳೇ, ನೀನು ಮತ್ತೆ ಗೃಹಿಣಿಯಾಗಿ ಸುಖದಿಂದ ಬಾಳುವಂತೆ, ನಾನು ನಿನಗೆ ವಿಶ್ರಾಂತಿ ಸ್ಥಳ ಏರ್ಪಾಟು ಮಾಡುವುದು ನನ್ನ ಕರ್ತವ್ಯವಲ್ಲವೇ?</verse>
				<verse number="2">ಈಗ ನೀನು ಯಾರ ದಾಸಿಯರ ಸಂಗಡ ಇದ್ದೀಯೋ, ಆ ಬೋವಜನು ನಮ್ಮ ಬಂಧುವಾಗಿದ್ದಾನೆ. ಇಗೋ, ಅವನು ರಾತ್ರಿಯಲ್ಲಿ ಕಣದಲ್ಲಿ ಜವೆಗೋಧಿಯನ್ನು ತೂರುವನು.</verse>
				<verse number="3">ನೀನು ಸ್ನಾನಮಾಡಿ ಎಣ್ಣೆ ಹಚ್ಚಿಕೊಂಡು ನಿನ್ನ ಒಳ್ಳೆಯ ವಸ್ತ್ರಗಳನ್ನು ಧರಿಸಿಕೊಂಡು ಆ ಕಣಕ್ಕೆ ಹೋಗು. ಆದರೆ ಆ ಮನುಷ್ಯನು ತಿಂದು ಕುಡಿದು ತೀರಿಸುವವರೆಗೂ ಅವನಿಗೆ ನೀನು ಅಲ್ಲಿರುವದು ಅವನಿಗೆ ತಿಳಿಯದಿರಲಿ.</verse>
				<verse number="4">ಅವನು ಮಲಗಿಕೊಂಡಾಗ ಅವನು ಮಲಗಿರುವ ಸ್ಥಳವನ್ನು ನೀನು ತಿಳಿದುಕೊಂಡು ಹೋಗಿ ಅವನ ಪಾದಗಳ ಮೇಲಿನ ಹೊದಿಕೆಯನ್ನು ತೆಗೆದು ಮಲಗಿಕೋ. ಆಗ ನೀನು ಮಾಡಬೇಕಾದದ್ದೇನೆಂದು ಅವನು ನಿನಗೆ ತಿಳಿಸುವನು,” ಎಂದಳು.</verse>
				<verse number="5">ಅದಕ್ಕೆ ರೂತಳು, “ನೀವು ನನಗೆ ಹೇಳಿದ್ದನ್ನೆಲ್ಲಾ ಮಾಡುವೆನು,” ಎಂದಳು.</verse>
				<verse number="6">ಅವಳು ಆ ಕಣಕ್ಕೆ ಹೋಗಿ ತನ್ನ ಅತ್ತೆ ತನಗೆ ಆಜ್ಞಾಪಿಸಿದ ಪ್ರಕಾರವೇ ಮಾಡಿದಳು.</verse>
				<verse number="7">ಬೋವಜನು ತಿಂದು ಕುಡಿದು ಸಂತುಷ್ಟನಾಗಿದ್ದನು. ಅವನು ಕಾಳಿನ ರಾಶಿಯ ಕೊನೆಯಲ್ಲಿ ಬಂದು ಮಲಗಿಕೊಂಡನು. ಆಗ ರೂತಳು ಮೆಲ್ಲಗೆ ಬಂದು ಅವನ ಪಾದಗಳ ಮೇಲಿದ್ದ ಹೊದಿಕೆಯನ್ನು ತೆಗೆದು ಮಲಗಿಕೊಂಡಳು.</verse>
				<verse number="8">ಆದರೆ ಮಧ್ಯರಾತ್ರಿಯಲ್ಲಿ ಬೋವಜನು ಹೆದರಿ ತಿರುಗಿ ನೋಡಿದಾಗ ಇಗೋ, ಒಬ್ಬ ಸ್ತ್ರೀ ತನ್ನ ಕಾಲುಗಳ ಬಳಿಯಲ್ಲಿ ಮಲಗಿರುವುದನ್ನು ಕಂಡನು.</verse>
				<verse number="9">ಆಗ ಅವನು, “ನೀನು ಯಾರು?” ಎಂದನು. ಅದಕ್ಕವಳು, “ನಾನು ನಿಮ್ಮ ದಾಸಿಯಾದ ರೂತಳು. ನೀವು ನಿಮ್ಮ ಹೊದಿಕೆಯ ಅಂಚನ್ನು ನನ್ನ ಮೇಲೆ ಹಾಕಿರಿ. ಏಕೆಂದರೆ ನೀವು ನನ್ನನ್ನು ವಿಮೋಚಿಸತಕ್ಕ ಹತ್ತಿರ ಸಂಬಂಧಿಕನು,” ಎಂದಳು.</verse>
				<verse number="10">ಅದಕ್ಕೆ ಅವನು, “ನನ್ನ ಮಗಳೇ, ಯೆಹೋವ ದೇವರಿಂದ ನಿನಗೆ ಆಶೀರ್ವಾದವಾಗಲಿ, ಬಡವರೂ ಐಶ್ವರ್ಯವಂತರೂ ಆದ ಯೌವನಸ್ಥರ ಹಿಂದೆ ನೀನು ಹೋಗದೆ ಇದ್ದುದರಿಂದ ಮೊದಲು ತೋರಿಸಿದ್ದಕ್ಕಿಂತ ಕಡೆಯಲ್ಲಿ ನೀನು ತೋರಿಸಿದ ದಯೆಯು ಹೆಚ್ಚಾಗಿದೆ.</verse>
				<verse number="11">ಈಗ ನನ್ನ ಮಗಳೇ, ನೀನು ಭಯಪಡಬೇಡ. ನಿನಗೆ ಬೇಕಾಗಿರುವುದನ್ನು ನಿನಗೆ ಮಾಡುವೆನು. ನೀನು ಗುಣವತಿಯಾದ ಸ್ತ್ರೀ ಎಂದು ಪಟ್ಟಣದಲ್ಲಿರುವ ನನ್ನ ಜನರೆಲ್ಲರೂ ಬಲ್ಲರು.</verse>
				<verse number="12">ಈಗ ನಾನು ನಿನ್ನ ವಿಮೋಚಿಸತಕ್ಕ ಸಮೀಪ ಬಂಧುವಾಗಿದ್ದೇನೆ ಎಂಬುದು ನಿಜವೇ. ಆದರೆ ನನಗಿಂತಲೂ ಸಮೀಪಸ್ಥನಾದ ಬಂಧುವು ಒಬ್ಬನಿದ್ದಾನೆ.</verse>
				<verse number="13">ಈ ರಾತ್ರಿಯಲ್ಲಿ ಇಲ್ಲಿರು. ನಾಳೆ ಬೆಳಿಗ್ಗೆ ಅವನು ನಿನಗೆ ವಿಮೋಚಕ ಬಂಧುವಿನ ಕರ್ತವ್ಯ ಮಾಡಿದರೆ ಒಳ್ಳೆಯದು. ಅವನು ನಿನಗೆ ವಿಮೋಚಕ ಬಂಧುವಿನ ಕರ್ತವ್ಯ ಮಾಡಲು ಮನಸ್ಸಿಲ್ಲದಿದ್ದರೆ ಯೆಹೋವ ದೇವರ ಜೀವದಾಣೆ, ನಾನೇ ಅದನ್ನು ಮಾಡುವೆನು. ಉದಯಕಾಲದವರೆಗೂ ಇಲ್ಲಿಯೇ ಮಲಗಿರು,” ಎಂದನು.</verse>
				<verse number="14">ಅವಳು ಹಾಗೆಯೇ ಉದಯಕಾಲದವರೆಗೂ ಅವನ ಪಾದಗಳ ಬಳಿಯಲ್ಲಿ ಮಲಗಿದ್ದು ಯಾರಿಗೂ ಗೊತ್ತಾಗಬಾರದೆಂದು ಹೊತ್ತಿಗೆ ಮುಂಚೆ ಎದ್ದಳು. ಅವನು, “ಒಬ್ಬ ಸ್ತ್ರೀ ಕಣದಲ್ಲಿ ಬಂದಳೆಂದು ಯಾರಿಗೂ ತಿಳಿಯದಿರಲಿ,” ಎಂದನು.</verse>
				<verse number="15">ಅವನು, “ನಿನ್ನ ಮೇಲ್ಹೊದಿಕೆಯನ್ನು ಹಿಡಿ,” ಎಂದನು. ಅವಳು ಅದನ್ನು ಹಿಡಿದಾಗ ಅವನು ಅದರಲ್ಲಿ ಸುಮಾರು ಇಪ್ಪತ್ತೈದು ಕಿಲೋಗ್ರಾಂ ಜವೆಗೋಧಿಯನ್ನು ಅಳೆದು ಹಾಕಿ ಆಕೆಯ ಮೇಲೆ ಹೊರಿಸಿದನು. ಅವಳು ಅದನ್ನು ಹೊತ್ತುಕೊಂಡು ಪಟ್ಟಣಕ್ಕೆ ಬಂದಳು.</verse>
				<verse number="16">ಅವಳು ತನ್ನ ಅತ್ತೆಯ ಬಳಿಗೆ ಬಂದಾಗ ಅವಳ ಅತ್ತೆಯು, “ನನ್ನ ಮಗಳೇ, ಏನು ನಡೆಯಿತು?” ಎಂದಳು. ಆಗ ಅವಳು ಆ ಮನುಷ್ಯನು ತನಗೆ ಮಾಡಿದ್ದನ್ನೆಲ್ಲಾ ಅವಳಿಗೆ ತಿಳಿಸಿದಳು.</verse>
				<verse number="17">“ ‘ನೀನು ನಿನ್ನ ಅತ್ತೆಯ ಬಳಿಗೆ ಬರೀ ಕೈಯಾಗಿ ಹೋಗಬಾರದು’ ಎಂದು ಅವನು ಸುಮಾರು ಇಪ್ಪತ್ತೈದು ಕಿಲೋಗ್ರಾಂ ಜವೆಗೋಧಿಯನ್ನು ನನಗೆ ಕೊಟ್ಟನು,” ಎಂದಳು.</verse>
				<verse number="18">ಅದಕ್ಕೆ ನೊವೊಮಿ, “ನನ್ನ ಮಗಳೇ, ಈ ಕಾರ್ಯ ಏನಾಗುವುದೋ, ಎಂದು ನೀನು ತಿಳಿಯುವವರೆಗೂ ಸುಮ್ಮನೆ ಇರು. ಆ ಮನುಷ್ಯನು ಈ ಹೊತ್ತು ಈ ಕಾರ್ಯವನ್ನು ತೀರಿಸುವವರೆಗೂ ವಿಶ್ರಾಂತಿಯಲ್ಲಿ ಇರಲಾರನು,” ಎಂದಳು.</verse>
			</chapter>
			<chapter number="4">
				<verse number="1">ಬೋವಜನು ಪಟ್ಟಣದ ಬಾಗಿಲ ಬಳಿ ಹೋಗಿ ಕುಳಿತುಕೊಂಡನು. ಆಗ ಬೋವಜನು ಹೇಳಿದ್ದ ಆ ವಿಮೋಚಕ ಬಂಧುವು ಹಾದುಹೋಗುತ್ತಿದ್ದನು. ಬೋವಜನು ಅವನಿಗೆ, “ನನ್ನ ಸ್ನೇಹಿತನೇ, ಈ ಕಡೆಗೆ ಬಂದು ಇಲ್ಲಿ ಕುಳಿತುಕೋ,” ಎಂದನು. ಅವನು ಬಂದು ಕುಳಿತುಕೊಂಡನು.</verse>
				<verse number="2">ಆಗ ಬೋವಜನು ಪಟ್ಟಣದ ಹಿರಿಯರಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ, “ಇಲ್ಲಿ ಕುಳಿತುಕೊಳ್ಳಿರಿ,” ಎಂದನು. ಅವರು ಕುಳಿತರು.</verse>
				<verse number="3">ಆಗ ಬೋವಜನು ಆ ವಿಮೋಚಕ ಬಂಧುವಿಗೆ ಹೇಳಿದ್ದೇನೆಂದರೆ, “ಮೋವಾಬ್ ಸೀಮೆಯಿಂದ ತಿರುಗಿ ಬಂದ ನೊವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನಿಗೆ ಇದ್ದ ಹೊಲದ ಪಾಲನ್ನು ಮಾರಿಬಿಡಬೇಕೆಂದಿರುತ್ತಾಳೆ.</verse>
				<verse number="4">ನಿವಾಸಿಗಳ ಮುಂದೆಯೂ ನನ್ನ ಜನರಾದ ಹಿರಿಯರ ಮುಂದೆಯೂ ಅದನ್ನು ಕೊಂಡು ಬಿಡಿಸಿಕೊಂಡರೆ ಬಿಡಿಸಿಕೋ. ಬಿಡಿಸಿಕೊಳ್ಳದಿದ್ದರೆ ನಾನು ತಿಳಿದುಕೊಳ್ಳುವ ಹಾಗೆ ನನಗೆ ಹೇಳು. ಏಕೆಂದರೆ ನೀನೂ ನಿನ್ನ ತರುವಾಯ ನಾನೂ ಅಲ್ಲದೆ ಬಿಡಿಸಿಕೊಳ್ಳುವವನು ಯಾರೂ ಇಲ್ಲ,” ಎಂದು ಹೇಳಿದನು. ಅದಕ್ಕೆ ಅವನು, “ನಾನು ಬಿಡಿಸಿಕೊಳ್ಳುವೆನು,” ಎಂದನು.</verse>
				<verse number="5">ಆಗ ಬೋವಜನು, “ನೀನು ನೊವೊಮಿಯಿಂದ ಆ ಹೊಲವನ್ನು ಕೊಂಡುಕೊಳ್ಳುವ ದಿವಸದಲ್ಲಿ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡುವ ಹಾಗೆ ಅವನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ತೆಗೆದುಕೊಳ್ಳಬೇಕು,” ಎಂದನು.</verse>
				<verse number="6">ಅದಕ್ಕೆ ಆ ಬಂಧುವು, “ನಾನು ನನ್ನ ಬಾಧ್ಯತೆಯನ್ನು ನಷ್ಟಪಡಿಸಿಕೊಳ್ಳದ ಹಾಗೆ ಅದನ್ನು ಬಿಡಿಸಿಕೊಳ್ಳಲಾರೆನು. ನಾನು ಬಿಡಿಸಿಕೊಳ್ಳತಕ್ಕದ್ದನ್ನು ನೀನು ಬಿಡಿಸಿಕೋ; ಏಕೆಂದರೆ ನಾನು ಬಿಡಿಸಿಕೊಳ್ಳಲಾರೆನು,” ಎಂದನು.</verse>
				<verse number="7">ಬಿಡಿಸಿಕೊಳ್ಳುವುದರಲ್ಲಿಯೂ ಬದಲು ಮಾಡುವುದರಲ್ಲಿಯೂ ಸಕಲ ಕಾರ್ಯಗಳೂ ದೃಢವಾಗುವ ಹಾಗೆ ಇಸ್ರಾಯೇಲಿನಲ್ಲಿ ಒಂದು ವಾಡಿಕೆಯಿತ್ತು. ಅದು ಕೊಡುವವನು ಕೊಳ್ಳುವವನಿಗೆ ತನ್ನ ಕೆರವನ್ನು ತೆಗೆದು ತನ್ನ ನೆರೆಯವನಿಗೆ ಕೊಡುತ್ತಿದ್ದನು. ಇದು ಇಸ್ರಾಯೇಲಿನಲ್ಲಿ ವ್ಯವಹಾರವನ್ನು ಕಾನೂನು ಬದ್ಧಗೊಳಿಸುವ ವಿಧಾನವಾಗಿತ್ತು.</verse>
				<verse number="8">ಹಾಗೆಯೇ ಆ ಬಂಧುವು ಬೋವಜನಿಗೆ, “ನೀನೇ ನಿನಗೋಸ್ಕರ ಅದನ್ನು ಕೊಂಡುಕೋ,” ಎಂದು ತನ್ನ ಕೆರವನ್ನು ತೆಗೆದುಹಾಕಿದನು.</verse>
				<verse number="9">ಆಗ ಬೋವಜನು ಹಿರಿಯರಿಗೂ ಸಮಸ್ತ ಜನರಿಗೂ, “ನಾನು ಎಲೀಮೆಲೆಕನಿಗೆ ಇದ್ದ ಎಲ್ಲವನ್ನೂ ಕಿಲ್ಯೋನನಿಗೂ ಮಹ್ಲೋನನಿಗೂ ಇದ್ದ ಎಲ್ಲವನ್ನೂ ನೊವೊಮಿಯ ಕೈಯಿಂದ ಕೊಂಡುಕೊಂಡೆನು ಎಂಬುದಕ್ಕೆ ಈ ದಿನ ನೀವು ಸಾಕ್ಷಿಗಳಾಗಿದ್ದೀರಿ.</verse>
				<verse number="10">ಇದಲ್ಲದೆ ಸತ್ತವನ ಹೆಸರನ್ನು ಸ್ಥಿರಮಾಡಲು ನಾನು ಮಹ್ಲೋನನ ಹೆಂಡತಿಯಾಗಿದ್ದ ಮೋವಾಬ್ಯಳಾದ ರೂತಳನ್ನು ನನಗೆ ಹೆಂಡತಿಯಾಗಿ ಸ್ವೀಕರಿಸಿದ್ದೇನೆ. ಇದರಿಂದ ಹೊಲದ ಖಾತೆಯು ಗತಿಸಿದ ಮಹ್ಲೋನನ ಹೆಸರಿನಲ್ಲಿಯೇ ಉಳಿಯುವುದು. ಅವನ ಹೆಸರೂ ಅವನ ವಂಶವೂ ಊರಲ್ಲಿಯೇ ನೆಲೆಯಾಗಿರುವುದು. ಇದಕ್ಕೆ ಈ ದಿನ ನೀವು ಸಾಕ್ಷಿಗಳಾಗಿದ್ದೀರಿ,” ಎಂದನು.</verse>
				<verse number="11">ಆಗ ಊರುಬಾಗಿಲಲ್ಲಿ ಕೂಡಿದ್ದ ಸಮಸ್ತ ಜನರೂ ಹಿರಿಯರೂ, “ನಾವು ಸಾಕ್ಷಿಗಳೇ, ನಿನ್ನ ಮನೆಯಲ್ಲಿ ಬಂದ ಸ್ತ್ರೀಯನ್ನು ಯೆಹೋವ ದೇವರು ಇಸ್ರಾಯೇಲ್ ಮನೆಯನ್ನು ಕಟ್ಟಿದ ಇಬ್ಬರಾದ ರಾಹೇಲಳ ಹಾಗೆಯೂ ಲೇಯಳ ಹಾಗೆಯೂ ಮಾಡಲಿ. ಎಫ್ರಾತದಲ್ಲಿ ಧನವಂತನಾಗಿರು, ಬೇತ್ಲೆಹೇಮಿನಲ್ಲಿ ಘನವಂತನಾಗಿರು.</verse>
				<verse number="12">ಈ ಹುಡುಗಿಯಿಂದ ಯೆಹೋವ ದೇವರು ನಿನಗೆ ಕೊಡುವ ಸಂತಾನದಿಂದ ನಿನ್ನ ಮನೆಯು ತಾಮಾರಳು ಯೆಹೂದನಿಗೆ ಹೆತ್ತ ಪೆರೆಚನ ಮನೆಯ ಹಾಗೆಯೇ ಆಗಲಿ,” ಎಂದರು.</verse>
				<verse number="13">ಬೋವಜನು ರೂತಳನ್ನು ಮದುವೆಯಾದನು. ಅವಳು ಅವನಿಗೆ ಹೆಂಡತಿಯಾದಳು. ಅವನು ಅವಳೊಂದಿಗೆ ಬಾಳಿದಾಗ, ರೂತಳು ಯೆಹೋವ ದೇವರ ಅನುಗ್ರಹದಿಂದ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು.</verse>
				<verse number="14">ಆಗ ಸ್ತ್ರೀಯರು ನೊವೊಮಿಗೆ, “ಇಸ್ರಾಯೇಲಿನಲ್ಲಿ ವಿಮೋಚಿಸತಕ್ಕ ಬಾಧ್ಯಸ್ಥನನ್ನು ನಿನಗೆ ಅನುಗ್ರಹಿಸಿದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಈ ಮಗನು ಪ್ರಖ್ಯಾತನಾಗಲಿ.</verse>
				<verse number="15">ಅವನು ನಿನಗೆ ಪ್ರಾಣವನ್ನು ಪುನರುಜ್ಜೀವಿಸುವವನಾಗಿಯೂ ನಿನ್ನ ವೃದ್ಧ ವಯಸ್ಸಿನಲ್ಲಿ ಸಂರಕ್ಷಿಸುವವನಾಗಿಯೂ ಇರುವನು. ಏಕೆಂದರೆ ನಿನ್ನನ್ನು ಪ್ರೀತಿ ಮಾಡುವ ಏಳುಮಂದಿ ಮಕ್ಕಳಿಗಿಂತ ನಿನಗೆ ಉತ್ತಮಳಾಗಿರುವ ನಿನ್ನ ಸೊಸೆಯು ಅವನನ್ನು ಹೆತ್ತಳು,” ಎಂದರು.</verse>
				<verse number="16">ನೊವೊಮಿಯು ಆ ಮಗುವನ್ನು ಎತ್ತಿ ತನ್ನ ಉಡಿಲಲ್ಲಿ ಇಟ್ಟುಕೊಂಡು ಅದಕ್ಕೆ ದಾದಿಯಾದಳು.</verse>
				<verse number="17">ಆಗ ನೆರೆಹೊರೆಯ ಸ್ತ್ರೀಯರು ನೊವೊಮಿಗೆ, “ಒಬ್ಬ ಮಗನು ಹುಟ್ಟಿದ್ದಾನೆ,” ಎಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ದಾವೀದನ ತಂದೆಯಾದ ಇಷಯನಿಗೆ ತಂದೆಯಾದವನು.</verse>
				<verse number="18">ಪೆರೆಚನ ಸಂತತಿಯ ವಿವರ: ಪೆರೆಚನು ಹೆಚ್ರೋನನ ತಂದೆಯಾಗಿದ್ದನು;</verse>
				<verse number="19">ಹೆಚ್ರೋನನು ರಾಮನ ತಂದೆಯಾಗಿದ್ದನು; ರಾಮನು ಅಮ್ಮೀನಾದಾಬನ ತಂದೆಯಾಗಿದ್ದನು;</verse>
				<verse number="20">ಅಮ್ಮೀನಾದಾಬನು ನಹಶೋನನ ತಂದೆಯಾಗಿದ್ದನು; ನಹಶೋನನು ಸಲ್ಮೋನನ ತಂದೆಯಾಗಿದ್ದನು;</verse>
				<verse number="21">ಸಲ್ಮೋನನು ಬೋವಜನ ತಂದೆಯಾಗಿದ್ದನು; ಬೋವಜನು ಓಬೇದನ ತಂದೆಯಾಗಿದ್ದನು;</verse>
				<verse number="22">ಓಬೇದನು ಇಷಯನ ತಂದೆಯಾಗಿದ್ದನು; ಇಷಯನು ದಾವೀದನ ತಂದೆಯಾಗಿದ್ದನು.</verse>
			</chapter>
		</book>
		<book number="9">
			<chapter number="1">
				<verse number="1">ಎಫ್ರಾಯೀಮ್ ಬೆಟ್ಟದ ಪ್ರದೇಶ ರಾಮತಾಯೀಮ್ ಚೋಫಿಮಿನಲ್ಲಿ ಎಲ್ಕಾನ ಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು. ಅವನು ಎಫ್ರಾಯೀಮ್ಯನಾದ ಚೂಫನ ಮೊಮ್ಮಗನೂ ತೋಹುವಿನ ಮಗನೂ ಆದ ಎಲೀಹುವಿನ ಮಗನಾದ ಯೆರೋಹಾಮನ ಮಗನಾಗಿದ್ದನು.</verse>
				<verse number="2">ಅವನಿಗೆ ಇಬ್ಬರು ಹೆಂಡತಿಯರು. ಒಬ್ಬಳ ಹೆಸರು ಹನ್ನ, ಮತ್ತೊಬ್ಬಳ ಹೆಸರು ಪೆನಿನ್ನ. ಪೆನಿನ್ನಳಿಗೆ ಮಕ್ಕಳಿದ್ದರು. ಆದರೆ ಹನ್ನಳಿಗೆ ಮಕ್ಕಳಿರಲಿಲ್ಲ.</verse>
				<verse number="3">ಅವನು ಶೀಲೋವಿನಲ್ಲಿ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸಲೂ, ಅವರಿಗೆ ಬಲಿಯನ್ನು ಅರ್ಪಿಸಲೂ ಪ್ರತಿವರ್ಷ ಪಟ್ಟಣದಿಂದ ಹೋಗುತ್ತಿದ್ದನು. ಯೆಹೋವ ದೇವರ ಯಾಜಕ ಏಲಿಯ ಮಕ್ಕಳಿಬ್ಬರಾದ ಹೊಫ್ನಿಯೂ, ಫೀನೆಹಾಸನೂ ಅಲ್ಲಿ ಇದ್ದರು.</verse>
				<verse number="4">ಎಲ್ಕಾನನು ಬಲಿ ಅರ್ಪಿಸುವ ಕಾಲದಲ್ಲಿ ಅವನು ತನ್ನ ಹೆಂಡತಿ ಪೆನಿನ್ನಳಿಗೂ, ಅವಳ ಸಮಸ್ತ ಪುತ್ರಪುತ್ರಿಯರಿಗೂ ಪಾಲನ್ನು ಕೊಡುತ್ತಿದ್ದನು.</verse>
				<verse number="5">ಅವನು ಹನ್ನಳನ್ನು ಪ್ರೀತಿಸಿದ್ದರಿಂದ ಹನ್ನಳಿಗೆ ಎರಡಷ್ಟು ಪಾಲನ್ನು ಕೊಡುತ್ತಿದ್ದನು. ಆದರೆ ಯೆಹೋವ ದೇವರು ಹನ್ನಳ ಗರ್ಭವನ್ನು ಮುಚ್ಚಿಬಿಟ್ಟಿದ್ದರು.</verse>
				<verse number="6">ಯೆಹೋವ ದೇವರು ಅವಳ ಗರ್ಭವನ್ನು ಮುಚ್ಚಿದ್ದರಿಂದ, ಅವಳ ಪ್ರತಿಸ್ಪರ್ಧಿಯಾದ ಪೆನಿನ್ನಳು ಹನ್ನಳಿಗೆ ಮನಗುಂದುವ ಹಾಗೆ ಬಹಳ ಕೆಣಕಿ ಬಾಧಿಸಿದಳು.</verse>
				<verse number="7">ಹೀಗೆಯೇ ಅವನು ಪ್ರತಿ ಸಂವತ್ಸರದಲ್ಲಿಯೂ ಮಾಡುತ್ತಿದ್ದನು, ಇವಳು ಯೆಹೋವ ದೇವರ ಮನೆಗೆ ಹೋಗುತ್ತಿರುವಾಗ ಆ ರೀತಿಯಾಗಿ ಹನ್ನಳನ್ನು ಬಾಧಿಸುತ್ತಿದ್ದಳು. ಅದರಿಂದ ಹನ್ನಳು ಊಟಮಾಡದೆ ಅಳುತ್ತಾ ಇದ್ದಳು.</verse>
				<verse number="8">ಆಗ ಅವಳ ಗಂಡ ಎಲ್ಕಾನನು ಅವಳಿಗೆ, “ಹನ್ನಳೇ, ಏಕೆ ಅಳುತ್ತೀ? ಏಕೆ ಊಟಮಾಡದೆ ಇದ್ದೀ? ನಿನ್ನ ಮನ ಏಕೆ ಕುಂದಿದೆ? ಹತ್ತು ಮಂದಿ ಪುತ್ರರಿಗಿಂತ ನಾನು ನಿನಗೆ ಹೆಚ್ಚಲ್ಲವೆ?” ಎಂದನು.</verse>
				<verse number="9">ಅವರು ಶೀಲೋವಿನಲ್ಲಿ ಊಟಮಾಡಿದ ತರುವಾಯ ಹನ್ನಳು ಎದ್ದು ನಿಂತಳು. ಯಾಜಕನಾದ ಏಲಿ ಯೆಹೋವ ದೇವರ ಮಂದಿರದ ಸ್ತಂಭದ ಬಳಿ ಆಸನದ ಮೇಲೆ ಕುಳಿತಿರುವಾಗ,</verse>
				<verse number="10">ಅವಳು ಬಹಳ ಮನಗುಂದಿದವಳಾಗಿ ಯೆಹೋವ ದೇವರನ್ನು ಪ್ರಾರ್ಥಿಸಿ, ಅತ್ತು ಒಂದು</verse>
				<verse number="11">ಹರಕೆಮಾಡಿ, “ಸೇನಾಧೀಶ್ವರ ಯೆಹೋವ ದೇವರೇ, ನೀವು ನಿಶ್ಚಯವಾಗಿ ನಿಮ್ಮ ದಾಸಿಯ ದೀನತೆಯನ್ನು ಕಂಡು, ನಿಮ್ಮ ದಾಸಿಯನ್ನು ಮರೆಯದೆ, ನನ್ನನ್ನು ನೆನಸಿ, ನಿಮ್ಮ ದಾಸಿಗೆ ಗಂಡು ಮಗುವನ್ನು ಕೊಟ್ಟರೆ, ಅವನು ಬದುಕುವ ಸಕಲ ದಿವಸಗಳಲ್ಲಿ ಅವನನ್ನು ಯೆಹೋವ ದೇವರಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರಿಕನ ಕತ್ತಿ ಬೀಳುವುದಿಲ್ಲ,” ಎಂದಳು.</verse>
				<verse number="12">ಅವಳು ಯೆಹೋವ ದೇವರ ಮುಂದೆ ಹೆಚ್ಚಾಗಿ ಪ್ರಾರ್ಥನೆ ಮಾಡುತ್ತಿರುವಾಗ, ಏಲಿಯು ಅವಳ ಬಾಯನ್ನೇ ನೋಡುತ್ತಿದ್ದನು.</verse>
				<verse number="13">ಹನ್ನಳು ತನ್ನ ಹೃದಯದಲ್ಲೇ ಮಾತನಾಡುತ್ತಾ, ತನ್ನ ತುಟಿಗಳನ್ನು ಮಾತ್ರ ಆಡಿಸುತ್ತಾ ಇದ್ದುದರಿಂದ ಅವಳ ಶಬ್ದವು ಕೇಳಿಸಲಿಲ್ಲ. ಆದ್ದರಿಂದ ಏಲಿಯು ಅವಳು ಅಮಲೇರಿದ್ದಾಳೆಂದು ನೆನಸಿದನು.</verse>
				<verse number="14">ಏಲಿಯು ಅವಳಿಗೆ, “ಎಷ್ಟರವರೆಗೂ ಅಮಲೇರಿದವಳಾಗಿರುವೆ? ನಿನ್ನ ಬಳಿಯಿಂದ ನಿನ್ನ ದ್ರಾಕ್ಷಾರಸವನ್ನು ತೊರೆದುಬಿಡು,” ಎಂದನು.</verse>
				<verse number="15">ಅದಕ್ಕೆ ಹನ್ನಳು ಅವನಿಗೆ ಉತ್ತರವಾಗಿ, “ನನ್ನ ಒಡೆಯನೇ, ಹಾಗಲ್ಲ. ನಾನು ದುಃಖದ ಆತ್ಮವುಳ್ಳ ಸ್ತ್ರೀಯಾಗಿದ್ದೇನೆ. ನಾನು ದ್ರಾಕ್ಷಾರಸವನ್ನಾದರೂ ಮದ್ಯಪಾನವನ್ನಾದರೂ ಕುಡಿದವಳಲ್ಲ. ನಾನು ಯೆಹೋವ ದೇವರ ಮುಂದೆ ನನ್ನ ಮನೋವೇದನೆಯನ್ನೆಲ್ಲಾ ತೋಡಿಕೊಳ್ಳುತ್ತಾ ಇದ್ದೇನೆ.</verse>
				<verse number="16">ನಿನ್ನ ದಾಸಿಯನ್ನು ದುಷ್ಟಳೆಂದು ನೆನಸಬೇಡ. ನನ್ನ ಹೆಚ್ಚಾದ ಚಿಂತೆಯಿಂದಲೂ, ದುಃಖದಿಂದಲೂ ಈವರೆಗೂ ಮಾತನಾಡಿಕೊಳ್ಳುತ್ತಾ ಇದ್ದೆನು,” ಎಂದಳು.</verse>
				<verse number="17">ಆಗ ಏಲಿಯು ಅವಳಿಗೆ, “ಸಮಾಧಾನದಿಂದ ಹೋಗು. ಇಸ್ರಾಯೇಲಿನ ದೇವರು, ಅವರಿಂದ ನೀನು ಬೇಡಿಕೊಂಡ ನಿನ್ನ ವಿಜ್ಞಾಪನೆಯಂತೆ ನಿನಗೆ ಕೊಡಲಿ,” ಎಂದನು.</verse>
				<verse number="18">ಅದಕ್ಕವಳು, “ನಿನ್ನ ಸೇವಕಿಗೆ ನಿನ್ನ ದೃಷ್ಟಿಯಲ್ಲಿ ದಯೆ ತೋರಲಿ,” ಎಂದಳು. ಆ ಸ್ತ್ರೀಯು ಹೊರಟುಹೋಗಿ ಊಟ ಮಾಡಿದಳು. ಆಮೇಲೆ ಅವಳ ಮುಖದಲ್ಲಿ ದುಃಖವು ಕಾಣಲಿಲ್ಲ.</verse>
				<verse number="19">ಅವರು ಉದಯದಲ್ಲಿ ಎದ್ದು, ಯೆಹೋವ ದೇವರನ್ನು ಆರಾಧಿಸಿ, ಹಿಂದಿರುಗಿಕೊಂಡು ರಾಮದಲ್ಲಿರುವ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಸಂಗಮಿಸಲು, ಆಗ ಯೆಹೋವ ದೇವರು ಅವಳನ್ನು ಜ್ಞಾಪಕಮಾಡಿಕೊಂಡರು.</verse>
				<verse number="20">ಹನ್ನಳು ಗರ್ಭವತಿಯಾಗಿ, ಕಾಲವು ಪೂರ್ತಿಯಾದ ತರುವಾಯ ಮಗನನ್ನು ಹೆತ್ತು, “ನಾನು ಇವನಿಗಾಗಿ ಯೆಹೋವ ದೇವರನ್ನು ಬೇಡಿ ಪಡೆದುಕೊಂಡೆನು,” ಎಂದು ಹೇಳಿ ಅವನಿಗೆ, ಸಮುಯೇಲ ಎಂದು ಹೆಸರಿಟ್ಟಳು.</verse>
				<verse number="21">ಎಲ್ಕಾನನು ಯೆಹೋವ ದೇವರಿಗೆ ಪ್ರತಿ ವರುಷದ ಬಲಿಯನ್ನೂ, ತನ್ನ ಹರಕೆಯನ್ನೂ ಸಲ್ಲಿಸುವುದಕ್ಕೆ ತನ್ನ ಮನೆಯವರೆಲ್ಲರ ಸಂಗಡ ಹೋಗುವಾಗ,</verse>
				<verse number="22">ಹನ್ನಳು ಹೋಗದೆ ತನ್ನ ಗಂಡನಿಗೆ, “ಮಗುವು ಎದೆಹಾಲು ಕುಡಿಯುವುದನ್ನು ಬಿಡುವವರೆಗೂ ನಾನು ಬರುವುದಿಲ್ಲ. ಅವನು ಯೆಹೋವ ದೇವರ ಸನ್ನಿಧಿಯ ದರ್ಶನಕ್ಕೂ ಅಲ್ಲಿ ಎಂದೆಂದಿಗೂ ಇರುವುದಕ್ಕೂ ನಾನು ಅವನನ್ನು ಆಮೇಲೆ ತೆಗೆದುಕೊಂಡು ಬರುವೆನು,” ಎಂದಳು.</verse>
				<verse number="23">ಅದಕ್ಕೆ ಅವಳ ಗಂಡನಾದ ಎಲ್ಕಾನನು ಅವಳಿಗೆ, “ನೀನು ನಿನಗೆ ಒಳ್ಳೆಯದಾಗಿ ತೋರುವ ಹಾಗೆ ಮಾಡು. ಅವನು ಎದೆಹಾಲು ಕುಡಿಯುವುದನ್ನು ಬಿಡುವವರೆಗೂ ಕಾದುಕೊಂಡಿರು. ಯೆಹೋವ ದೇವರು ತಮ್ಮ ವಾಕ್ಯವನ್ನು ಪೂರೈಸಲಿ,” ಎಂದನು. ಹಾಗೆಯೇ ಅವಳು ನಿಂತು ತನ್ನ ಮಗುವು ಎದೆಹಾಲು ಬಿಡುವವರೆಗೂ ಅವನಿಗೆ ಎದೆಹಾಲು ಕೊಡುತ್ತಿದ್ದಳು.</verse>
				<verse number="24">ಅವನು ಎದೆಹಾಲು ಕುಡಿಯುವುದನ್ನು ಬಿಟ್ಟ ತರುವಾಯ, ಅವನನ್ನು ತನ್ನ ಸಂಗಡ ತೆಗೆದುಕೊಂಡು, ಮೂರು ವರ್ಷದ ಹೋರಿಯೊಂದನ್ನೂ, ಸುಮಾರು ಹದಿನಾರು ಕಿಲೋಗ್ರಾಂ ಹಿಟ್ಟನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ತೆಗೆದುಕೊಂಡು ಶೀಲೋವಿನಲ್ಲಿರುವ ಯೆಹೋವ ದೇವರ ಮನೆಗೆ ಹೋದಳು.</verse>
				<verse number="25">ಆಗ ಆ ಮಗುವು ಚಿಕ್ಕದಾಗಿತ್ತು. ಅವರು ಹೋರಿಯನ್ನು ಸಮರ್ಪಣೆ ಮಾಡಿದ ತರುವಾಯ, ಮಗುವನ್ನು ಏಲಿಯ ಬಳಿಗೆ ತಂದರು.</verse>
				<verse number="26">“ನನ್ನ ಒಡೆಯನೇ, ನಿನ್ನ ಪ್ರಾಣದ ಸಾಕ್ಷಿ, ಇಲ್ಲಿ ಯೆಹೋವ ದೇವರಿಗೆ ಪ್ರಾರ್ಥನೆಮಾಡಿ, ಇಲ್ಲಿ ನಿನ್ನ ಬಳಿಯಲ್ಲಿ ನಿಂತಿದ್ದ ಸ್ತ್ರೀಯು ನಾನೇ. ಈ ಮಗುವಿಗೋಸ್ಕರ ಪ್ರಾರ್ಥನೆ ಮಾಡಿದೆನು.</verse>
				<verse number="27">ನಾನು ಯೆಹೋವ ದೇವರಿಗೆ ವಿಜ್ಞಾಪನೆ ಮಾಡಿದ್ದನ್ನು ಅವರು ನನಗೆ ಕೊಟ್ಟರು.</verse>
				<verse number="28">ಆದ್ದರಿಂದ ನಾನು ಅವನನ್ನು ಯೆಹೋವ ದೇವರಿಗೆ ಒಪ್ಪಿಸಿದ್ದೇನೆ. ಅವನು ಜೀವಿಸಿರುವವರೆಗೆ ಯೆಹೋವ ದೇವರಿಗೆ ಸಮರ್ಪಿತನಾಗಿರುವನು,” ಎಂದಳು. ಆಮೇಲೆ ಅವರೆಲ್ಲರೂ ಅಲ್ಲಿ ಯೆಹೋವ ದೇವರನ್ನು ಆರಾಧಿಸಿದರು.</verse>
			</chapter>
			<chapter number="2">
				<verse number="1">ಹನ್ನಳು ಪ್ರಾರ್ಥಿಸಿ ಹೇಳಿದ್ದೇನೆಂದರೆ, “ನನ್ನ ಹೃದಯವು ಯೆಹೋವ ದೇವರಲ್ಲಿ ಸಂತೋಷಿಸಿತು. ನನ್ನ ಕೊಂಬು ಯೆಹೋವ ದೇವರಲ್ಲಿ ಉನ್ನತವಾಯಿತು. ನನ್ನ ಶತ್ರುಗಳ ಮುಂದೆ ನನ್ನ ಬಾಯಿ ಹೆಚ್ಚಳಪಟ್ಟಿತು. ಏಕೆಂದರೆ ನಾನು ನಿಮ್ಮ ರಕ್ಷಣೆಯಲ್ಲಿ ಹರ್ಷಿಸುತ್ತೇನೆ.</verse>
				<verse number="2">“ಯೆಹೋವ ದೇವರ ಹಾಗೆ ಪರಿಶುದ್ಧರಾದವರಿಲ್ಲ. ನಿಶ್ಚಯವಾಗಿ ನಿಮ್ಮ ಹೊರತು ಮತ್ತೊಬ್ಬರಿಲ್ಲ. ನಮ್ಮ ದೇವರ ಹಾಗೆಯೇ ಆಶ್ರಯದುರ್ಗ ಇಲ್ಲ.</verse>
				<verse number="3">“ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡದಿರಲಿ. ಏಕೆಂದರೆ ಯೆಹೋವ ದೇವರು ತಿಳುವಳಿಕೆಯುಳ್ಳ ದೇವರು. ಅವರು ಮನುಷ್ಯರ ಕಾರ್ಯಗಳನ್ನು ತೂಗಿನೋಡುವರು.</verse>
				<verse number="4">“ಪರಾಕ್ರಮಶಾಲಿಗಳ ಬಿಲ್ಲುಗಳು ಮುರಿದು ಬಿದ್ದಿವೆ, ಎಡವಿದವರು ಬಲದಿಂದ ನಡುಕಟ್ಟಿ ನಿಂತಿದ್ದಾರೆ.</verse>
				<verse number="5">ತೃಪ್ತಿಪಟ್ಟವರು ಆಹಾರಕ್ಕಾಗಿ ಕೂಲಿ ಕೆಲಸಕ್ಕೆ ಹೋಗುತ್ತಾರೆ. ಹಸಿದವರು ಇನ್ನು ಮುಂದೆ ಹಸಿಯರು. ಬಂಜೆಯಾದವಳು ಏಳುಮಂದಿ ಮಕ್ಕಳನ್ನು ಹೆತ್ತಳು. ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನಳಾದಳು.</verse>
				<verse number="6">“ಯೆಹೋವ ದೇವರು ಮರಣ ತರುವವರೂ, ಬದುಕಿಸುವವರೂ ಆಗಿದ್ದಾರೆ. ಪಾತಾಳಕ್ಕೆ ಇಳಿಯುವಂತೆ ಮಾಡುತ್ತಾರೆ, ಮೇಲಕ್ಕೆ ತರುತ್ತಾರೆ.</verse>
				<verse number="7">ಯೆಹೋವ ದೇವರು ಬಡತನವನ್ನು, ಐಶ್ವರ್ಯವನ್ನು ಕೊಡುವವರೂ, ತಗ್ಗಿಸುವವರೂ, ಉನ್ನತ ಮಾಡುವವರೂ ಆಗಿದ್ದಾರೆ.</verse>
				<verse number="8">ದೇವರು ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುತ್ತಾರೆ. ಭಿಕ್ಷುಕನನ್ನು ತಿಪ್ಪೆ ಗುಂಡಿಯಿಂದ ತೆಗೆದು ಉನ್ನತಕ್ಕೇರಿಸುವವರೂ ಆಗಿದ್ದಾರೆ. ಅವರನ್ನು ಪ್ರಧಾನರ ಮಧ್ಯದಲ್ಲಿ ಕೂಡ್ರಿಸುತ್ತಾರೆ. ಘನತೆಯ ಸಿಂಹಾಸನವನ್ನು ಬಾಧ್ಯವಾಗಿ ಕೊಡುತ್ತಾರೆ. “ಭೂಮಿಯ ಆಧಾರ ಸ್ತಂಭಗಳು ಯೆಹೋವ ದೇವರದ್ದೇ. ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾರೆ.</verse>
				<verse number="9">ಅವರು ತಮ್ಮ ಪರಿಶುದ್ಧರ ಪಾದಗಳನ್ನು ಕಾಯುವರು. ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು. “ತನ್ನ ಶಕ್ತಿಯಿಂದ ಒಬ್ಬನೂ ಜಯಿಸನು.</verse>
				<verse number="10">ಯೆಹೋವ ದೇವರ ಸಂಗಡ ವಿವಾದಿಸುವವರು ಚದರಿಹೋಗುವರು. ಅವರು ಆಕಾಶದಲ್ಲಿಂದ ಅವರ ಮೇಲೆ ಗುಡುಗುವರು, ಯೆಹೋವ ದೇವರು ಲೋಕಾಂತ್ಯದವರೆಗೂ ನ್ಯಾಯತೀರಿಸುವರು. “ತಮ್ಮ ಅರಸನಿಗೆ ಬಲ ಕೊಡುವರು. ತಮ್ಮ ಅಭಿಷಿಕ್ತನ ಕೊಂಬನ್ನು ಉನ್ನತ ಮಾಡುವರು.”</verse>
				<verse number="11">ಎಲ್ಕಾನನು ರಾಮದಲ್ಲಿರುವ ತನ್ನ ಮನೆಗೆ ಹೋದನು. ಆದರೆ ಆ ಹುಡುಗನು ಯಾಜಕನಾದ ಏಲಿಯ ಸಮ್ಮುಖದಲ್ಲಿ ಯೆಹೋವ ದೇವರ ಸೇವೆ ಮಾಡುತ್ತಿದ್ದನು.</verse>
				<verse number="12">ಆದರೆ ಏಲಿಯ ಪುತ್ರರು ಯೆಹೋವ ದೇವರನ್ನು ಗೌರವಿಸದೆ ದುಷ್ಟರಾಗಿದ್ದರು.</verse>
				<verse number="13">ಆ ಯಾಜಕರು ಜನರನ್ನು ನಡೆಸಿದ ವಿಧ ಏನೆಂದರೆ: ಯಾವನಾದರೂ ಬಲಿ ಅರ್ಪಿಸಿದರೆ, ಆ ಅರ್ಪಿಸಿದ ಬಲಿಯ ಮಾಂಸವನ್ನು ಬೇಯಿಸುವಾಗ, ಯಾಜಕನ ಸೇವಕನು ಮೂರು ಶೂಲವುಳ್ಳ ಆಯುಧವನ್ನು ತೆಗೆದುಕೊಂಡು ಬಂದು,</verse>
				<verse number="14">ಅದನ್ನು ತಪ್ಪಲೆಯಲ್ಲಾಗಲಿ, ಪಾತ್ರೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚುವನು. ಆ ಆಯುಧದಲ್ಲಿ ಬರುವುದನ್ನೆಲ್ಲಾ ಯಾಜಕನು ತನಗೆ ತೆಗೆದುಕೊಳ್ಳುವನು. ಹೀಗೆಯೇ ಅವರು ಶೀಲೋವಿನಲ್ಲಿ ಅಲ್ಲಿಗೆ ಬರುವ ಸಮಸ್ತ ಇಸ್ರಾಯೇಲರಿಗೆ ಮಾಡಿದರು.</verse>
				<verse number="15">ಇದಲ್ಲದೆ ಕೊಬ್ಬನ್ನು ಬಲಿ ಅರ್ಪಿಸುವುದಕ್ಕಿಂತ ಮುಂಚೆ ಯಾಜಕನ ಸೇವಕನು ಬಂದು, ಬಲಿಯನ್ನು ಅರ್ಪಿಸುವವನ ಸಂಗಡ, “ಯಾಜಕನಿಗೆ ಸುಡುವುದಕ್ಕೆ ಮಾಂಸವನ್ನು ಕೊಡು. ಅವನು ನಿನ್ನ ಕೈಯಿಂದ ಬೆಂದ ಮಾಂಸವನ್ನು ತೆಗೆದುಕೊಳ್ಳುವುದಿಲ್ಲ. ಅದು ಹಸಿಯಾಗಿರಬೇಕು,” ಎನ್ನುತ್ತಿದ್ದನು.</verse>
				<verse number="16">“ಮೊದಲು ಕೊಬ್ಬನ್ನು ಸುಡಲಿ, ಅನಂತರ ನಿನಗೆ ಬೇಕಾದದ್ದನ್ನು ತೆಗೆದುಕೋ,” ಎಂದು ಯಾರಾದರೂ ಹೇಳಿದರೆ; ಸೇವಕನು, “ಇಲ್ಲ ಈಗಲೇ ಕೊಡು. ನೀನು ಕೊಡದಿದ್ದರೆ, ನಾನು ಒತ್ತಾಯದಿಂದ ತೆಗೆದುಕೊಳ್ಳುವೆನು,” ಎನ್ನುತ್ತಿದ್ದನು.</verse>
				<verse number="17">ಈ ಯುವಕರ ಪಾಪವು ಯೆಹೋವ ದೇವರ ದೃಷ್ಟಿಯಲ್ಲಿ ಅಧಿಕವಾಗಿತ್ತು. ಏಕೆಂದರೆ ಅವರು ಯೆಹೋವ ದೇವರ ನೈವೇದ್ಯವನ್ನು ತುಚ್ಛವಾಗಿ ಕಂಡರು.</verse>
				<verse number="18">ಬಾಲಕನಾದ ಸಮುಯೇಲನು ನಾರುಮಡಿಯ ಏಫೋದನ್ನು ಕಟ್ಟಿಕೊಂಡು ಯೆಹೋವ ದೇವರ ಸನ್ನಿಧಿಯಲ್ಲಿ ಸೇವೆ ಮಾಡುತ್ತಿದ್ದನು.</verse>
				<verse number="19">ಅವನ ತಾಯಿ ಪ್ರತಿ ವರುಷದಲ್ಲೂ ವರುಷದ ಬಲಿಯನ್ನು ಅರ್ಪಿಸಲು ತನ್ನ ಗಂಡನ ಸಂಗಡ ಬರುವಾಗ, ಅವನಿಗೆ ಒಂದು ಚಿಕ್ಕ ನಿಲುವಂಗಿಯನ್ನು ಮಾಡಿಕೊಂಡು ಬರುವಳು.</verse>
				<verse number="20">ಆಗ ಏಲಿಯು ಎಲ್ಕಾನನನ್ನೂ, ಅವನ ಹೆಂಡತಿಯನ್ನೂ, “ಯೆಹೋವ ದೇವರಿಗೆ ಸಮರ್ಪಿಸಿಬಿಟ್ಟ ಈ ಮಗನಿಗೆ ಬದಲಾಗಿ ಈ ಹನ್ನಳಿಂದ ಯೆಹೋವ ದೇವರು ನಿನಗೆ ಬೇರೆ ಮಕ್ಕಳನ್ನು ದಯಪಾಲಿಸಲಿ,” ಎಂದು ಆಶೀರ್ವದಿಸುತ್ತಿದ್ದನು. ಅನಂತರ ಅವರು ತಿರುಗಿ ತಮ್ಮ ಮನೆಗೆ ಹಿಂದಿರುಗುತ್ತಿದ್ದರು.</verse>
				<verse number="21">ಹಾಗೆಯೇ ಯೆಹೋವ ದೇವರು ಹನ್ನಳಿಗೆ ಕೃಪೆ ತೋರಿಸಿದ್ದರಿಂದ, ಅವಳು ಗರ್ಭಧರಿಸಿ ಮೂವರು ಪುತ್ರರನ್ನೂ, ಇಬ್ಬರು ಪುತ್ರಿಯರನ್ನೂ ಹೆತ್ತಳು. ಇದಲ್ಲದೆ ಬಾಲಕನಾದ ಸಮುಯೇಲನು ಯೆಹೋವ ದೇವರ ಸನ್ನಿಧಿಯಲ್ಲಿ ಬೆಳೆಯುತ್ತಿದ್ದನು.</verse>
				<verse number="22">ಏಲಿಯು ಬಹಳ ವೃದ್ಧನಾಗಿದ್ದನು. ಅವನು ತನ್ನ ಪುತ್ರರು ಇಸ್ರಾಯೇಲ್ ಜನರಿಗೆ ಮಾಡುವುದೆಲ್ಲವನ್ನೂ, ಅವರು ದೇವದರ್ಶನ ಗುಡಾರದ ಬಾಗಿಲ ಬಳಿಯಲ್ಲಿ ಕೂಡಿಬರುವ ಸ್ತ್ರೀಯರ ಸಂಗಡ ಮಲಗಿದ್ದರೆಂಬುದನ್ನೂ ಕೇಳಿ ಅವರಿಗೆ,</verse>
				<verse number="23">“ನೀವು ಇಂಥಾ ಕಾರ್ಯಗಳನ್ನು ಮಾಡುವುದೇನು? ನಾನು ಎಲ್ಲ ಜನರಿಂದ ಈ ನಿಮ್ಮ ಕೆಟ್ಟ ಕೃತ್ಯಗಳನ್ನು ಕೇಳುತ್ತೇನೆ.</verse>
				<verse number="24">ನನ್ನ ಮಕ್ಕಳೇ, ಹಾಗೆ ಮಾಡಬೇಡಿರಿ. ಏಕೆಂದರೆ ಯೆಹೋವ ದೇವರ ಜನರಲ್ಲಿ ನೀವು ಮಾಡಿರುವ ಕಾರ್ಯಗಳ ವರ್ತಮಾನವು ಹರಡಿದ್ದು ಒಳ್ಳೆಯದಲ್ಲ.</verse>
				<verse number="25">ಮನುಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ, ದೇವರು ಅಪರಾಧಿಗಾಗಿ ಮಧ್ಯಸ್ಥಿಕೆಯನ್ನು ವಹಿಸುವರು. ಆದರೆ ಒಬ್ಬನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದರೆ, ಅವನಿಗೋಸ್ಕರ ವಿಜ್ಞಾಪನೆ ಮಾಡತಕ್ಕವರು ಯಾರು?” ಎಂದನು. ಆದರೂ ಅವರು ತಮ್ಮ ತಂದೆಯ ಮಾತನ್ನು ಕೇಳದೆ ಹೋದರು. ಯೆಹೋವ ದೇವರು ಅವರನ್ನು ಮರಣದಂಡನೆಗೆ ಒಪ್ಪಿಸಬೇಕೆಂದಿದ್ದರು.</verse>
				<verse number="26">ಆದರೆ ಬಾಲಕನಾದ ಸಮುಯೇಲನು ನಿಲುವಿನಿಂದಲೂ ಯೆಹೋವ ದೇವರ ಕೃಪೆಯಲ್ಲಿಯೂ ಜನರೊಂದಿಗೂ ಬೆಳೆಯುತ್ತಾ ಬಂದನು.</verse>
				<verse number="27">ದೇವರ ಮನುಷ್ಯನು ಏಲಿಯ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ನಿನಗೆ ಹೇಳುವದೇನೆಂದರೆ: ‘ನಿನ್ನ ತಂದೆಯ ಮನೆಯವರು ಈಜಿಪ್ಟಿನಿಂದ ಫರೋಹನ ಮನೆಯೊಳಗೆ ಇರುವಾಗ, ನಾನು ಅವರಿಗೆ ಪ್ರತ್ಯಕ್ಷವಾದದ್ದು ಸ್ಪಷ್ಟವಾಗಲಿಲ್ಲವೋ?</verse>
				<verse number="28">ನನ್ನ ಬಲಿಪೀಠದ ಮೇಲೆ ಬಲಿಯನ್ನು ಅರ್ಪಿಸುವುದಕ್ಕೂ, ಧೂಪವನ್ನು ಸುಡುವುದಕ್ಕೂ, ನನ್ನ ಮುಂದೆ ಏಫೋದನ್ನು ಧರಿಸಿಕೊಂಡಿರುವುದಕ್ಕೂ, ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರಬೇಕೆಂದು ನಾನು ಅವನನ್ನು ಆಯ್ದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲರು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ?</verse>
				<verse number="29">ನನ್ನ ಜನರಾದ ಇಸ್ರಾಯೇಲರು ನನಗೆ ಅರ್ಪಿಸುವ ತಮ್ಮ ಅರ್ಪಣೆಗಳಲ್ಲಿ ಪ್ರಾಮುಖ್ಯವಾದವುಗಳಿಂದ ನಿಮ್ಮನ್ನು ಕೊಬ್ಬಿಸಿಕೊಳ್ಳುವುದಕ್ಕೆ ನನ್ನ ವಾಸಸ್ಥಳದಲ್ಲಿ ನಾನು ಆಜ್ಞಾಪಿಸಿದ ನನ್ನ ಬಲಿಯನ್ನೂ, ಅರ್ಪಣೆಯನ್ನೂ ನೀವು ಒದ್ದು, ನನಗಿಂತ ನಿನ್ನ ಮಕ್ಕಳನ್ನು ಘನಪಡಿಸುವುದೇನು?’</verse>
				<verse number="30">“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.</verse>
				<verse number="31">ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟದಹಾಗೆ, ನಿನ್ನ ತೋಳನ್ನೂ ನಿನ್ನ ತಂದೆಯ ಮನೆಯವರ ತೋಳನ್ನೂ ನಾನು ಛೇದಿಸುವ ದಿನಗಳು ಬರುವುವು.</verse>
				<verse number="32">ಇದಲ್ಲದೆ ಇಸ್ರಾಯೇಲಿಗೆ ಮಾಡುವ ಸಕಲ ಉತ್ತಮವಾದವುಗಳಿಗೆ ಬದಲಾಗಿ, ನೀನು ನನ್ನ ವಾಸಸ್ಥಳದಲ್ಲಿ ಒಬ್ಬ ವೈರಿಯನ್ನು ಕಾಣುವೆ. ಎಂದಿಗೂ ನಿನ್ನ ಮನೆಯಲ್ಲಿ ಒಬ್ಬ ವೃದ್ಧನೂ ಇರುವುದಿಲ್ಲ.</verse>
				<verse number="33">ನನ್ನ ಬಲಿಪೀಠದ ಸೇವೆಯಿಂದ ನಾನು ತೆಗೆದು ಬಿಡದ ಮನುಷ್ಯನು, ನಿನ್ನ ಕಣ್ಣುಗಳನ್ನು ಕುಂದಿಸಿ, ನಿನ್ನ ಹೃದಯವನ್ನು ವೇದನೆ ಪಡಿಸುವುದಕ್ಕೆ ಇರುವನು. ನಿನ್ನ ಮನೆಯ ಸಂತತಿಯವರೆಲ್ಲಾ ಯೌವನ ಪ್ರಾಯದಲ್ಲಿಯೇ ಖಡ್ಗದಿಂದ ಸಾಯುವರು.</verse>
				<verse number="34">“ ‘ಇದಲ್ಲದೆ ನಿನಗೆ ಗುರುತಾಗಿ ಹೊಫ್ನಿಯು, ಫೀನೆಹಾಸನು ಎಂಬ ಇಬ್ಬರು ಮಕ್ಕಳು ಒಂದೇ ದಿವಸದಲ್ಲಿ ಸಾಯುವರು.</verse>
				<verse number="35">ಆದರೆ ನನ್ನ ಹೃದಯಕ್ಕೂ, ನನ್ನ ಮನಸ್ಸಿಗೂ ಸಮರ್ಪಕವಾದದ್ದನ್ನೇ ಮಾಡುವ ನಂಬಿಗಸ್ತನಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ, ಅವನಿಗೆ ಸ್ಥಿರವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ಸೇವೆಮಾಡುವನು.</verse>
				<verse number="36">ಆಗ ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡಬಿದ್ದು, ಒಂದು ಬೆಳ್ಳಿಯ ಹಣವನ್ನೂ, ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ, “ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆಯಲ್ಲಿ ಸೇರಿಸಿಕೋ, ಎಂದು ಹೇಳುವರು,” ಎಂದರು.’ ”</verse>
			</chapter>
			<chapter number="3">
				<verse number="1">ಬಾಲಕನಾದ ಸಮುಯೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವ ದೇವರಿಗೆ ಸೇವೆ ಮಾಡಿಕೊಂಡಿದ್ದನು. ಆ ದಿನಗಳಲ್ಲಿ ಯೆಹೋವ ದೇವರ ವಾಕ್ಯವು ವಿರಳವಾಗಿತ್ತು. ಅಲ್ಲಿ ದೇವದರ್ಶನಗಳು ಅಪರೂಪವಾಗಿದ್ದವು.</verse>
				<verse number="2">ಒಂದು ರಾತ್ರಿ ಏಲಿಯು ತನ್ನ ಸ್ಥಳದಲ್ಲಿ ಮಲಗಿದ್ದನು. ನೋಡುವುದಕ್ಕಾಗದಂತೆ ಅವನ ಕಣ್ಣುಗಳು ಮಬ್ಬಾಗುತ್ತಿದ್ದವು.</verse>
				<verse number="3">ದೇವರ ಮಂಜೂಷವಿರುವ ಯೆಹೋವ ದೇವರ ಮಂದಿರದಲ್ಲಿ ದೇವರ ದೀಪವು ಆರಿಹೋಗುವುದಕ್ಕಿಂತ ಮುಂಚೆ ಸಮುಯೇಲನು ಮಲಗಿದ್ದನು.</verse>
				<verse number="4">ಆಗ ಯೆಹೋವ ದೇವರು ಸಮುಯೇಲನನ್ನು ಕರೆದರು. ಅದಕ್ಕವನು, “ಇಗೋ, ನಾನು ಇಲ್ಲಿದ್ದೇನೆ,” ಎಂದು ಹೇಳಿ,</verse>
				<verse number="5">ಏಲಿಯ ಬಳಿಗೆ ಓಡಿಹೋಗಿ, “ಇಗೋ, ಇಲ್ಲಿ ಇದ್ದೇನೆ; ನೀನು ನನ್ನನ್ನು ಕರೆದೆಯಲ್ಲಾ,” ಎಂದನು. ಅದಕ್ಕವನು, “ನಾನು ನಿನ್ನನ್ನು ಕರೆಯಲಿಲ್ಲ, ತಿರುಗಿ ಹೋಗಿ ಮಲಗಿಕೋ,” ಎಂದನು. ಸಮುವೇಲನು ಹೋಗಿ ಮಲಗಿದನು.</verse>
				<verse number="6">ಯೆಹೋವ ದೇವರು, “ಸಮುಯೇಲನೇ,” ಎಂದು ಅವನನ್ನು ತಿರುಗಿ ಕರೆದರು. ಆಗ ಸಮುಯೇಲನು ಎದ್ದು ಏಲಿಯ ಬಳಿಗೆ ಹೋಗಿ, “ಇಗೋ, ಇದ್ದೇನೆ; ನನ್ನನ್ನು ಕರೆದೆಯಲ್ಲಾ,” ಎಂದನು. ಅದಕ್ಕವನು, “ನನ್ನ ಮಗನೇ, ನಾನು ಕರೆಯಲಿಲ್ಲ; ನೀನು ಹೋಗಿ ಮಲಗಿಕೋ,” ಎಂದನು.</verse>
				<verse number="7">ಸಮುಯೇಲನು ಆವರೆಗೂ ಯೆಹೋವ ದೇವರನ್ನು ತಿಳಿದುಕೊಂಡಿರಲಿಲ್ಲ. ಯೆಹೋವ ದೇವರ ವಾಕ್ಯವು ಅವನಿಗೆ ಪ್ರಕಟವಾಗಿರಲೂ ಇಲ್ಲ.</verse>
				<verse number="8">ಯೆಹೋವ ದೇವರು ಮತ್ತೆ ಮೂರನೆಯ ಸಾರಿ, “ಸಮುಯೇಲನೇ,” ಎಂದು ಕರೆದರು. ಅವನು ಎದ್ದು ಏಲಿಯ ಬಳಿಗೆ ಹೋಗಿ, “ಇಗೋ, ಇದ್ದೇನೆ. ನೀನು ನನ್ನನ್ನು ಕರೆದೆಯಲ್ಲಾ,” ಎಂದನು. ಆಗ ಏಲಿಯು, ಯೆಹೋವ ದೇವರು ಹುಡುಗನನ್ನು ಕರೆದರೆಂದು ಗ್ರಹಿಸಿಕೊಂಡನು.</verse>
				<verse number="9">ಏಲಿಯು ಸಮುಯೇಲನಿಗೆ, “ನೀನು ಹೋಗಿ ಮಲಗು; ಅವರು ನಿನ್ನನ್ನು ಕರೆದರೆ, ಆಗ ನೀನು, ‘ಯೆಹೋವ ದೇವರೇ, ಮಾತನಾಡಿ, ನಿಮ್ಮ ದಾಸನು ಕೇಳುತ್ತಾನೆ,’ ಎಂದು ಹೇಳು,” ಎಂದನು. ಹಾಗೆಯೇ ಸಮುಯೇಲನು ಹೋಗಿ ತನ್ನ ಸ್ಥಳದಲ್ಲಿ ಮಲಗಿದನು.</verse>
				<verse number="10">ಆಗ ಯೆಹೋವ ದೇವರು ಬಂದು ನಿಂತು ಮೊದಲಿನ ಹಾಗೆಯೇ, “ಸಮುಯೇಲನೇ, ಸಮುಯೇಲನೇ,” ಎಂದು ಕರೆದರು. ಅದಕ್ಕೆ ಸಮುಯೇಲನು, “ಯೆಹೋವ ದೇವರೇ ಮಾತನಾಡಿ; ನಿಮ್ಮ ದಾಸನು ಕೇಳುತ್ತಾನೆ,” ಎಂದನು.</verse>
				<verse number="11">ಆಗ ಯೆಹೋವ ದೇವರು ಸಮುಯೇಲನಿಗೆ, “ನಾನು ಇಸ್ರಾಯೇಲಿನಲ್ಲಿ ಒಂದು ಕಾರ್ಯವನ್ನು ಮಾಡುವೆನು. ಅದನ್ನು ಕೇಳುವವನ ಎರಡು ಕಿವಿಗಳೂ ಕಂಪಿಸುವುವು.</verse>
				<verse number="12">ಏಕೆಂದರೆ ನಾನು ಏಲಿಯ ಮನೆಯನ್ನು ಕುರಿತು ಹೇಳಿದ್ದನ್ನೆಲ್ಲಾ ಅವರಿಗೆ ಆ ದಿವಸದಲ್ಲಿ ಮಾಡುತ್ತೇನೆ. ನಾನು ಆರಂಭಿಸಿದ ಹಾಗೆ ಅಂತ್ಯವನ್ನು ಮಾಡುವೆನು.</verse>
				<verse number="13">ನಾನು ಅವನಿಗೆ, ಅವನು ತಿಳಿದ ದುಷ್ಟತನದ ನಿಮಿತ್ತ ನಾನು ಎಂದೆಂದಿಗೂ ಅವನ ಮನೆಗೆ ನ್ಯಾಯತೀರಿಸುವೆನು, ಎಂದು ಹೇಳಿದ್ದೆನು. ಏಕೆಂದರೆ ತನ್ನ ಪುತ್ರರು ದೇವರ ನಿಂದನೆ ಮಾಡಿದಾಗ, ಅವರನ್ನು ಹತೋಟಿಗೆ ತರಲಿಲ್ಲ.</verse>
				<verse number="14">ಆದ್ದರಿಂದ ‘ಏಲಿಯ ಮನೆಯ ದುಷ್ಟತನವು ಎಂದೆಂದಿಗೂ ಬಲಿಯಿಂದಲಾದರೂ, ಅರ್ಪಣೆಯಿಂದಲಾದರೂ ಪ್ರಾಯಶ್ಚಿತ್ತವಾಗುವದಿಲ್ಲ, ಎಂದು ನಾನು ಏಲಿಯ ಮನೆಯನ್ನು ಕುರಿತು ಪ್ರಮಾಣಮಾಡಿದೆನು,’ ” ಎಂದರು.</verse>
				<verse number="15">ಸಮುಯೇಲನು ಉದಯದವರೆಗೂ ಮಲಗಿದ್ದು, ಯೆಹೋವ ದೇವರ ಮನೆಯ ಬಾಗಿಲುಗಳನ್ನು ತೆರೆದನು. ಆದರೆ ಸಮುಯೇಲನು ದರ್ಶನವನ್ನು ಏಲಿಗೆ ತಿಳಿಸಲು ಭಯಪಟ್ಟನು.</verse>
				<verse number="16">ಆಗ ಏಲಿಯು ಸಮುಯೇಲನನ್ನು ಕರೆದು ಅವನಿಗೆ, “ನನ್ನ ಮಗನಾದ ಸಮುಯೇಲನೇ,” ಎಂದನು. ಅದಕ್ಕವನು, “ಇಗೋ, ಇದ್ದೇನೆ,” ಎಂದನು.</verse>
				<verse number="17">ಏಲಿಯು ಅವನಿಗೆ, “ಅವರು ನಿನಗೆ ಹೇಳಿದ ಮಾತೇನು? ನನಗೆ ಅದನ್ನು ಮರೆಮಾಡಬೇಡ. ಅವರು ನಿನಗೆ ಹೇಳಿದ ಸಕಲ ವಾರ್ತೆಗಳಲ್ಲಿ ನೀನು ಯಾವುದನ್ನಾದರೂ ನನಗೆ ಮರೆಮಾಡಿದರೆ, ದೇವರು ನಿನ್ನನ್ನು ದಂಡಿಸಲಿ,” ಎಂದನು.</verse>
				<verse number="18">ಹಾಗೆಯೇ ಸಮುಯೇಲನು ಅವನಿಗೆ ಒಂದನ್ನೂ ಮರೆಮಾಡದೆ, ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿದನು. ಅದಕ್ಕವನು, “ಅವರು ಯೆಹೋವ ದೇವರು. ಅವರಿಗೆ ಸರಿತೋರುವುದನ್ನು ಮಾಡಲಿ,” ಎಂದನು.</verse>
				<verse number="19">ಸಮುಯೇಲನು ಬೆಳೆಯುತ್ತಾ ಬಂದನು. ಯೆಹೋವ ದೇವರು ಅವನ ಸಂಗಡ ಇದ್ದು, ಅವರ ವಾಕ್ಯಗಳಲ್ಲಿ ಒಂದಾದರೂ ಬಿದ್ದು ಹೋಗಗೊಡಿಸಲಿಲ್ಲ.</verse>
				<verse number="20">ಆಗ ಸಮುಯೇಲನು ಯೆಹೋವ ದೇವರ ಪ್ರವಾದಿಯಾಗಿ ದೃಢಪಟ್ಟನೆಂದು ದಾನ್ ಊರು ಮೊದಲ್ಗೊಂಡು ಬೇರ್ಷೆಬದವರೆಗೂ ಇದ್ದ ಇಸ್ರಾಯೇಲರೆಲ್ಲರು ತಿಳಿದಿದ್ದರು.</verse>
				<verse number="21">ಯೆಹೋವ ದೇವರು ತಿರುಗಿ ಶೀಲೋವಿನಲ್ಲಿ ಕಾಣಿಸಿಕೊಂಡರು. ಏಕೆಂದರೆ ಶೀಲೋವಿನಲ್ಲಿ ಯೆಹೋವ ದೇವರು ವಾಕ್ಯದ ಮೂಲಕ ಸಮುಯೇಲನಿಗೆ ಪ್ರಕಟಿಸಿಕೊಂಡರು.</verse>
			</chapter>
			<chapter number="4">
				<verse number="1">ಸಮುಯೇಲನ ವಾಕ್ಯವು ಇಸ್ರಾಯೇಲದಲ್ಲಿ ಹರಡಿತು. ಇಸ್ರಾಯೇಲರು ಫಿಲಿಷ್ಟಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟು, ಎಬೆನೆಜೆರಿನ ಸಮೀಪದಲ್ಲಿ ದಂಡಿಳಿದರು. ಫಿಲಿಷ್ಟಿಯರು ಅಫೇಕಿನಲ್ಲಿ ದಂಡಿಳಿದರು.</verse>
				<verse number="2">ಫಿಲಿಷ್ಟಿಯರು ಇಸ್ರಾಯೇಲಿಗೆ ಎದುರಾಗಿ ವ್ಯೂಹವನ್ನು ಕಟ್ಟಿ ಯುದ್ಧಮಾಡಿದಾಗ, ಇಸ್ರಾಯೇಲರು ಫಿಲಿಷ್ಟಿಯರ ಮುಂದೆ ಸೋತರು. ಫಿಲಿಷ್ಟಿಯರು ಯುದ್ಧ ರಂಗದಲ್ಲಿ ಹೆಚ್ಚು ಕಡಿಮೆ ನಾಲ್ಕು ಸಾವಿರ ಜನರನ್ನು ಹತಮಾಡಿದರು.</verse>
				<verse number="3">ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು, “ಈ ಹೊತ್ತು ಯೆಹೋವ ದೇವರು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿದ್ದೇನು? ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ, ನಾವು ಅದನ್ನು ಶೀಲೋವಿನಿಂದ ತರಿಸೋಣ,” ಎಂದರು.</verse>
				<verse number="4">ಕೆರೂಬಿಗಳ ಮಧ್ಯದಲ್ಲಿರುವ ಸೇನಾಧೀಶ್ವರ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬರಲು ಶೀಲೋವಿಗೆ ಜನರನ್ನು ಕಳುಹಿಸಿದರು. ಅಲ್ಲಿ ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ, ಫೀನೆಹಾಸನೂ ದೇವರ ಒಡಂಬಡಿಕೆಯ ಮಂಜೂಷದ ಬಳಿಯಲ್ಲಿದ್ದರು.</verse>
				<verse number="5">ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಪಾಳೆಯಕ್ಕೆ ಬಂದಾಗ, ಇಸ್ರಾಯೇಲರೆಲ್ಲಾ ಮಹಾ ಆರ್ಭಟವಾಗಿ ಭೂಮಿ ಕಂಪಿಸುವ ಹಾಗೆ ಆರ್ಭಟಿಸಿದರು.</verse>
				<verse number="6">ಅವರ ಆರ್ಭಟವು ಫಿಲಿಷ್ಟಿಯರಿಗೆ ಕೇಳಿದಾಗ, “ಹಿಬ್ರಿಯರ ಪಾಳೆಯದ ಈ ಮಹಾ ಆರ್ಭಟವೇನು?” ಎಂದು ವಿಚಾರಿಸಿದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಪಾಳೆಯದಲ್ಲಿ ಬಂತೆಂದು ತಿಳಿದುಕೊಂಡರು.</verse>
				<verse number="7">“ದೇವರು ಇವರ ಪಾಳೆಯಕ್ಕೆ ಬಂದಿದ್ದಾರಂತೆ!” ಎಂದುಕೊಂಡು, ಫಿಲಿಷ್ಟಿಯರು ಭಯಪಟ್ಟು, ಅಯ್ಯೋ! ಪೂರ್ವದಲ್ಲಿ ಇಂಥದ್ದು ಆಗಿರಲಿಲ್ಲ.</verse>
				<verse number="8">ಅಯ್ಯೋ! ಆ ಪರಾಕ್ರಮಿಯಾದ ದೇವರುಗಳ ಕೈಯಿಂದ ನಮ್ಮನ್ನು ತಪ್ಪಿಸುವವರ‍್ಯಾರು? ಈಜಿಪ್ಟಿನವರನ್ನು ಮರುಭೂಮಿಯಲ್ಲಿ ಸಕಲ ಬಾಧೆಗಳಿಂದ ಹೊಡೆದ ದೇವರುಗಳು ಇವರೇ.</verse>
				<verse number="9">ಫಿಲಿಷ್ಟಿಯರೇ, ನೀವು ಬಲಗೊಂಡು ಶೂರರಾಗಿರಿ. ಹಿಬ್ರಿಯರು ನಿಮಗೆ ಗುಲಾಮರಾಗಿ ಮಾಡಿದ ಪ್ರಕಾರ ನೀವು ಅವರಿಗೆ ಗುಲಾಮರಾಗದ ಹಾಗೆ ಶೂರರಾಗಿ ಇದ್ದು, ಯುದ್ಧಮಾಡಿರೆಂದು ಹೇಳಿಕೊಂಡರು.</verse>
				<verse number="10">ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲರು ಸೋತು, ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾ ಸಂಹಾರವಾಯಿತು. ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.</verse>
				<verse number="11">ದೇವರ ಮಂಜೂಷವು ಶತ್ರುವಶವಾಯಿತು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿಯೂ ಫೀನೆಹಾಸನೂ ಮರಣಹೊಂದಿದರು.</verse>
				<verse number="12">ಅದೇ ದಿವಸದಲ್ಲಿ ಬೆನ್ಯಾಮೀನನಾದ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಯುದ್ಧರಂಗದಿಂದ ಶೀಲೋವಿಗೆ ಓಡಿಬಂದನು.</verse>
				<verse number="13">ಅವನು ಬರುವಾಗ, ಏಲಿಯು ದೇವರ ಮಂಜೂಷಕ್ಕೋಸ್ಕರ ತನ್ನ ಹೃದಯವು ನಡುಗುತ್ತಾ ಇರುವುದರಿಂದ, ಆಸನದ ಮೇಲೆ ಮಾರ್ಗದ ಬಳಿಯಲ್ಲಿ ನಿರೀಕ್ಷಿಸುತ್ತಾ ಕುಳಿತಿದ್ದನು. ಊರಲ್ಲಿ ವರ್ತಮಾನ ತಿಳಿಸಲು ಆ ಮನುಷ್ಯನು ಪಟ್ಟಣದಲ್ಲಿ ಪ್ರವೇಶಿಸಿದಾಗ ಪಟ್ಟಣವೆಲ್ಲಾ ಕೂಗಿತು.</verse>
				<verse number="14">ಕೂಗುವ ಶಬ್ದವನ್ನು ಏಲಿಯು ಕೇಳಿದಾಗ, “ಆ ಗುಂಪಿನ ಶಬ್ದ ಏನು?” ಎಂದನು. ಆಗ ಆ ಮನುಷ್ಯನು ತ್ವರೆಯಾಗಿ ಬಂದು ಏಲಿಗೆ ತಿಳಿಸಿದನು.</verse>
				<verse number="15">ಏಲಿಯು ತೊಂಬತ್ತೆಂಟು ವರುಷ ಪ್ರಾಯದವನಾಗಿದ್ದನು. ಅವನು ಕಾಣದ ಹಾಗೆ ಅವನ ಕಣ್ಣುಗಳು ಮಬ್ಬಾಗಿದ್ದವು.</verse>
				<verse number="16">ಆ ಮನುಷ್ಯನು ಏಲಿಗೆ, “ಯುದ್ಧರಂಗದಿಂದ ಬಂದವನು ನಾನೇ; ನಾನು ಈ ಹೊತ್ತು ಯುದ್ಧರಂಗದಿಂದ ಓಡಿ ಬಂದೆನು,” ಎಂದನು. ಆಗ ಅವನು, “ನನ್ನ ಮಗನೇ, ಅಲ್ಲಿ ನಡೆದ ವರ್ತಮಾನವೇನು?” ಎಂದನು.</verse>
				<verse number="17">ಅದಕ್ಕೆ ವರ್ತಮಾನ ತಂದವನು, “ಇಸ್ರಾಯೇಲರು ಫಿಲಿಷ್ಟಿಯರ ಮುಂದೆ ಓಡಿಹೋದರು. ಜನರಲ್ಲಿ ದೊಡ್ಡ ಸಂಹಾರವಾಯಿತು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿಯೂ, ಫೀನೆಹಾಸನೂ ಮರಣಹೊಂದಿದರು. ದೇವರ ಮಂಜೂಷವು ಶತ್ರುವಶವಾಯಿತು,” ಎಂದನು.</verse>
				<verse number="18">ವೃದ್ಧನೂ ಸ್ಥೂಲಕಾಯನೂ ಆದ ಏಲಿಯು ದೇವರ ಮಂಜೂಷದ ಮಾತನ್ನು ಕೇಳಿದಾಗ, ಆಸನದ ಮೇಲಿಂದ ಬಾಗಿಲಿನ ಕಡೆಗೆ ಹಿಂದಕ್ಕೆ ಬಿದ್ದು, ಕುತ್ತಿಗೆ ಮುರಿದು ಮರಣಹೊಂದಿದನು. ಅವನು ನಾಲ್ವತ್ತು ವರುಷ ಇಸ್ರಾಯೇಲರಿಗೆ ನ್ಯಾಯತೀರಿಸಿದನು.</verse>
				<verse number="19">ಇದಲ್ಲದೆ ಫೀನೆಹಾಸನ ಹೆಂಡತಿಯಾದ ಅವನ ಸೊಸೆಯು ಗರ್ಭಿಣಿಯಾಗಿ ಹೆರುವ ಕಾಲದಲ್ಲಿದ್ದಳು. ಅವಳು, ದೇವರ ಮಂಜೂಷವು ಶತ್ರು ವಶವಾಯಿತೆಂಬ ವರ್ತಮಾನವನ್ನೂ ತನ್ನ ಮಾವನೂ ತನ್ನ ಗಂಡನೂ ಮರಣಹೊಂದಿದರೆಂಬುದನ್ನೂ ಕೇಳಿದಾಗ, ಅವಳಿಗೆ ಪ್ರಸವವೇದನೆ ಉಂಟಾಗಿ, ಅವಳು ಗಂಡು ಮಗುವನ್ನು ಹೆತ್ತಳು.</verse>
				<verse number="20">ಅವಳು ಸಾಯುವ ವೇಳೆಯಲ್ಲಿ, ಅವಳ ಬಳಿಯಲ್ಲಿ ನಿಂತಿರುವ ಸ್ತ್ರೀಯರು, “ಭಯಪಡಬೇಡ. ಗಂಡು ಮಗುವನ್ನು ಹೆತ್ತಿದ್ದೀ,” ಎಂದು ಅವಳಿಗೆ ಹೇಳಿದರು. ಆಕೆ ಅವರ ಮಾತಿಗೆ ಲಕ್ಷ್ಯವನ್ನೂ ಕೊಡಲಿಲ್ಲ, ಪ್ರತ್ಯುತ್ತರವನ್ನೂ ಕೊಡಲಿಲ್ಲ.</verse>
				<verse number="21">ಆದರೆ ಅವಳು ಅದಕ್ಕೆ ಉತ್ತರವಾಗಿ ಅದರ ಮೇಲೆ ಲಕ್ಷ್ಯವಿಡದೆ ದೇವರ ಮಂಜೂಷವು ಶತ್ರು ವಶವಾಯಿತೆಂದೂ ತನ್ನ ಮಾವನೂ ತನ್ನ ಗಂಡನೂ ಮರಣಹೊಂದಿದರಿಂದಲೂ ದೇವರ ಮಹಿಮೆಯು ಇಸ್ರಾಯೇಲರನ್ನು ಬಿಟ್ಟುಹೋಯಿತು ಎಂದು ಹೇಳಿ, ಆ ಕೂಸಿಗೆ, “ಈಕಾಬೋದ್,” ಎಂದು ಹೆಸರಿಟ್ಟಳು.</verse>
				<verse number="22">ಏಕೆಂದರೆ ಅವಳು, “ದೇವರ ಮಂಜೂಷವು ಶತ್ರು ವಶವಾಗಿ ಹೋದದ್ದರಿಂದ ಮಹಿಮೆಯು ಇಸ್ರಾಯೇಲರನ್ನು ಬಿಟ್ಟುಹೋಯಿತು,” ಎಂದು ಹೇಳಿದಳು.</verse>
			</chapter>
			<chapter number="5">
				<verse number="1">ಫಿಲಿಷ್ಟಿಯರು ದೇವರ ಮಂಜೂಷವನ್ನು ತೆಗೆದುಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.</verse>
				<verse number="2">ಫಿಲಿಷ್ಟಿಯರು ದೇವರ ಮಂಜೂಷವನ್ನು ದಾಗೋನನ ಗುಡಿಗೆ ತೆಗೆದುಕೊಂಡುಹೋಗಿ, ದಾಗೋನನ ಪಕ್ಕದಲ್ಲಿಟ್ಟರು.</verse>
				<verse number="3">ಅಷ್ಡೋದ್ಯರು ಮಾರನೆಯ ದಿವಸ ಎದ್ದಾಗ, ದಾಗೋನ್ ವಿಗ್ರಹ ಯೆಹೋವ ದೇವರ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.</verse>
				<verse number="4">ಆಗ ಅವರು ದಾಗೋನನನ್ನು ತೆಗೆದು, ಅದನ್ನು ಅದರ ಸ್ಥಳದಲ್ಲಿ ತಿರುಗಿ ಇಟ್ಟರು. ಅವರು ಮಾರನೆಯ ದಿವಸ ಬೆಳಿಗ್ಗೆ ಎದ್ದಾಗ, ದಾಗೋನ್ ಯೆಹೋವ ದೇವರ ಮಂಜೂಷದ ಮುಂದೆ ಬೋರಲು ಬಿದ್ದಿತ್ತು. ದಾಗೋನನ ತಲೆಯೂ ಅದರ ಎರಡು ಕೈಗಳೂ ಕತ್ತರಿಸಲಾಗಿ ಹೊಸ್ತಿಲ ಮೇಲೆ ಬಿದ್ದಿದ್ದವು.</verse>
				<verse number="5">ಮುಂಡ ಮಾತ್ರ ಅದಕ್ಕೆ ಉಳಿದಿತ್ತು. ಆದ್ದರಿಂದ ಈ ದಿನದವರೆಗೂ ದಾಗೋನನ ಯಾಜಕರೂ, ದಾಗೋನನ ಗುಡಿಯನ್ನು ಪ್ರವೇಶಿಸುವವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿಲನ್ನು ತುಳಿಯುವುದಿಲ್ಲ.</verse>
				<verse number="6">ಯೆಹೋವ ದೇವರ ಕೈ ಅಷ್ಡೋದಿನವರ ಮೇಲೆ ಮಹಾ ಭಾರವಾಗಿತ್ತು. ಅವರನ್ನು ನಾಶಮಾಡಿ, ಅಷ್ಡೋದನ್ನೂ, ಅದರ ಮೇರೆಗಳನ್ನೂ ಗಡ್ಡೆರೋಗದಿಂದಲೂ ಬಾಧಿಸಿದರು.</verse>
				<verse number="7">ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ಕಂಡಾಗ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು. ಏಕೆಂದರೆ ಅವರ ಕೈ ನಮ್ಮ ಮೇಲೆಯೂ, ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ,” ಎಂದರು.</verse>
				<verse number="8">ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೆಯಕಳುಹಿಸಿ ಅವರಿಗೆ, “ಇಸ್ರಾಯೇಲ್ ದೇವರ ಮಂಜೂಷವನ್ನು ಏನು ಮಾಡೋಣ?” ಎಂದರು. ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವು ಗತ್ ಊರಿಗೆ ಕಳುಹಿಸಬೇಕು,” ಎಂದರು. ಅವರು ಇಸ್ರಾಯೇಲ್ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.</verse>
				<verse number="9">ಆದರೆ ಅವರು ಅದನ್ನು ತಂದ ತರುವಾಯ, ಯೆಹೋವ ದೇವರ ಕೈ ಆ ಪಟ್ಟಣದ ಮೇಲೆ ಬಂದು ಮಹಾ ನಾಶಮಾಡಿತು. ಇದಲ್ಲದೆ ಯೆಹೋವ ದೇವರು ಚಿಕ್ಕವರಿಂದ ಹಿರಿಯರವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದರು. ಅವರಿಗೆ ಗಡ್ಡೆರೋಗ ಬಂದಿತು.</verse>
				<verse number="10">ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ, ಎಕ್ರೋನ್ಯರು, “ನಮ್ಮನ್ನೂ, ನಮ್ಮ ಜನರನ್ನೂ ಕೊಂದುಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರು,” ಎಂದು ಕೂಗಿ ಹೇಳಿದರು.</verse>
				<verse number="11">ಆಗ ಆ ಇಡೀ ಪಟ್ಟಣಕ್ಕೆ ಮರಣಾಂತಿಕ ವಿನಾಶ ಉಂಟಾಗಿ, ದೇವರ ಕೈ ಅಲ್ಲಿ ಮಹಾಬಾಧಕವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟುಗೂಡಿಸಿ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ, ನಮ್ಮ ಜನರನ್ನೂ ಕೊಂದು ಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರುಗಿ ಹೋಗುವಂತೆ ಕಳುಹಿಸಿಬಿಡಿರಿ,” ಎಂದರು.</verse>
				<verse number="12">ಉಳಿದವರು ಸತ್ತು ಹೋಗದೆ ಗಡ್ಡೆರೋಗದಿಂದ ಬಾಧಿತರಾದರು, ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.</verse>
			</chapter>
			<chapter number="6">
				<verse number="1">ಯೆಹೋವ ದೇವರ ಮಂಜೂಷವು ಫಿಲಿಷ್ಟಿಯರ ಸೀಮೆಯಲ್ಲಿ ಏಳು ತಿಂಗಳು ಇದ್ದ ತರುವಾಯ</verse>
				<verse number="2">ಫಿಲಿಷ್ಟಿಯರು ಯಾಜಕರನ್ನೂ ಕಣಿಹೇಳುವವರನ್ನೂ ಕರೆದು, “ಯೆಹೋವ ದೇವರ ಮಂಜೂಷವನ್ನು ನಾವೇನು ಮಾಡಬೇಕು? ನಾವು ಅದನ್ನು ಹೇಗೆ ಅದರ ಸ್ಥಳಕ್ಕೆ ಕಳುಹಿಸುವುದು ನಮಗೆ ತಿಳಿಸಿರಿ,” ಎಂದರು.</verse>
				<verse number="3">ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವನ್ನು ನೀವು ಕಳುಹಿಸಬೇಕಾದರೆ ಅದನ್ನು ಬರಿದಾಗಿ ಕಳುಹಿಸದೆ, ಅದರ ಸಂಗಡ ನಿಶ್ಚಯವಾಗಿ ದೋಷಪರಿಹಾರ ಕಾಣಿಕೆಯನ್ನು ಕಳುಹಿಸಿರಿ, ಆಗ ನೀವು ಸ್ವಸ್ಥರಾಗುವಿರಿ. ಅವರ ಕೈ ನಿಮ್ಮನ್ನು ಬಿಟ್ಟುಹೋಗದೆ ಇರುವ ಕಾರಣ ನಿಮಗೆ ತಿಳಿಯುವುದು,” ಎಂದರು.</verse>
				<verse number="4">ಆಗ ಅವರು, “ದೋಷಪರಿಹಾರ ಕಾಣಿಕೆಗಾಗಿ ನಾವು ಅದರ ಸಂಗಡ ಕಳುಹಿಸತಕ್ಕದ್ದೇನು?” ಎಂದರು. ಅದಕ್ಕವರು, “ನಿಮಗೂ ನಿಮ್ಮ ಪ್ರಭುಗಳಿಗೂ ಒಂದೇ ವಿಧ ವ್ಯಾಧಿಯಿರುವುದರಿಂದ ಫಿಲಿಷ್ಟಿಯರ ಅಧಿಪತಿಗಳ ಸಂಖ್ಯೆಗೆ ಸರಿಯಾಗಿ ಒಬ್ಬೊಬ್ಬರಿಗೆ ಬಂಗಾರದ ಐದು ಗಡ್ಡೆಗಳನ್ನು ಮತ್ತು ಬಂಗಾರದ ಐದು ಇಲಿಗಳನ್ನೂ ಕಳುಹಿಸಿರಿ.</verse>
				<verse number="5">ಏಕೆಂದರೆ ನಿಮ್ಮೆಲ್ಲರ ನಾಶಕ್ಕೆ ಕಾರಣವಾದ ಈ ಗಡ್ಡೆಗಳ ಹಾಗು ಇಲಿಗಳ ಸ್ವರೂಪಗಳನ್ನು ನೀವು ಮಾಡಿ ಇಸ್ರಾಯೇಲ್ ದೇವರಿಗೆ ಮಹಿಮೆಯನ್ನು ಸಲ್ಲಿಸಬೇಕು. ಆಗ ಒಂದು ವೇಳೆ ಅವರು ನಿಮ್ಮ ಮೇಲೆಯೂ, ನಿಮ್ಮ ದೇವರುಗಳ ಮೇಲೆಯೂ, ನಿಮ್ಮ ಭೂಮಿಯ ಮೇಲೆಯೂ ಇರುವ ತಮ್ಮ ಕೈಯನ್ನು ತೆಗೆದು ಹಗುರಮಾಡುವರು.</verse>
				<verse number="6">ಈಜಿಪ್ಟಿನವರೂ, ಫರೋಹನೂ ತಮ್ಮ ಹೃದಯವನ್ನು ಕಠಿಣ ಮಾಡಿದ ಹಾಗೆ, ನೀವು ನಿಮ್ಮ ಹೃದಯವನ್ನು ಕಠಿಣಪಡಿಸುವುದೇನು? ದೇವರು ಅವರ ಮಧ್ಯದಲ್ಲಿ ಆಶ್ಚರ್ಯಕರವಾದ ಕ್ರಿಯೆಗಳನ್ನು ನಡಿಸಿದಾಗ, ಅವರು ಇಸ್ರಾಯೇಲರನ್ನು ಅವರು ಹೋಗುವಹಾಗೆ ಕಳುಹಿಸಲಿಲ್ಲವೋ?</verse>
				<verse number="7">“ಆದರೆ ಈಗ ನೀವು ಒಂದು ಹೊಸ ಬಂಡಿಯನ್ನು ಮಾಡಿ, ನೊಗವನ್ನು ಹಾಕದೆ ಇರುವ ಹಾಲು ಕರೆಯುವ ಎರಡು ಹಸುಗಳನ್ನು ತೆಗೆದುಕೊಂಡು, ಅವುಗಳನ್ನು ಬಂಡಿಗೆ ಕಟ್ಟಿ, ಅವುಗಳ ಕರುಗಳನ್ನು ಅವುಗಳ ಹಿಂದೆ ಹೋಗದ ಹಾಗೆ ಮನೆಗೆ ತೆಗೆದುಕೊಂಡು ಬಂದು,</verse>
				<verse number="8">ಯೆಹೋವ ದೇವರ ಮಂಜೂಷವನ್ನು ಬಂಡಿಯ ಮೇಲೆ ಇಟ್ಟು, ನೀವು ಕಳುಹಿಸಿಕೊಡುವ ನಿಮ್ಮ ದೋಷಪರಿಹಾರ ಕಾಣಿಕೆಯ ಬಂಗಾರದ ವಸ್ತುಗಳನ್ನು ಅದರ ಪಕ್ಕದಲ್ಲಿ ಒಂದು ಚಿಕ್ಕ ಪೆಟ್ಟಿಗೆಯಲ್ಲಿ ಹಾಕಿ, ಅದು ಹೋಗುವಹಾಗೆ ಕಳುಹಿಸಿರಿ.</verse>
				<verse number="9">ಆಗ ನೋಡಿರಿ, ಅದು ತನ್ನ ಮೇರೆಯಾದ ಬೇತ್ ಷೆಮೆಷ್ ಎಂಬ ಮಾರ್ಗವನ್ನು ಹಿಡಿದು ಹೋದರೆ, ಯೆಹೋವ ದೇವರು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾರೆ, ಇಲ್ಲದೆ ಹೋದರೆ ಅವರ ಹಸ್ತವು ನಮ್ಮನ್ನು ಮುಟ್ಟಲಿಲ್ಲ, ಅದು ತಾನಾಗಿಯೇ ನಮಗೆ ಆಯಿತೆಂದು ತಿಳಿದುಕೊಳ್ಳಿರಿ,” ಎಂದರು.</verse>
				<verse number="10">ಅವರು ಆ ಪ್ರಕಾರವೇ ಎರಡು ಹಾಲು ಕರೆಯುವ ಹಸುಗಳನ್ನು ತೆಗೆದುಕೊಂಡು ಅವುಗಳನ್ನು ಬಂಡಿಗೆ ಕಟ್ಟಿ ಅವುಗಳ ಕರುಗಳನ್ನು ಮನೆಯಲ್ಲಿಟ್ಟು</verse>
				<verse number="11">ಯೆಹೋವ ದೇವರ ಮಂಜೂಷವನ್ನೂ, ಬಂಗಾರದ ಇಲಿಗಳನ್ನೂ, ತಮ್ಮ ಗಡ್ಡೆರೋಗದ ರೂಪಗಳನ್ನೂ ಇಟ್ಟಿರುವ ಚಿಕ್ಕ ಪೆಟ್ಟಿಗೆಯನ್ನೂ ಆ ಬಂಡಿಯ ಮೇಲಿಟ್ಟರು.</verse>
				<verse number="12">ಆಗ ಹಸುಗಳು ಕೂಗುತ್ತಾ ಬೇತ್ ಷೆಮೆಷ್ ಕಡೆಗೆ ಹೋಗುವ ಮಾರ್ಗವನ್ನು ಹಿಡಿದು, ಎಡಕ್ಕಾಗಲಿ, ಬಲಕ್ಕಾಗಲಿ ತಿರುಗದೆ ಹೆದ್ದಾರಿಯಲ್ಲಿ ಹೋದವು. ಫಿಲಿಷ್ಟಿಯರ ಅಧಿಪತಿಗಳು ಬೇತ್ ಷೆಮೆಷ್ ಊರಿನ ಮೇರೆಯವರೆಗೂ ಅವುಗಳ ಹಿಂದೆ ಹೋದರು.</verse>
				<verse number="13">ಬೇತ್ ಷೆಮೆಷ್ ಊರಿನವರು ತಗ್ಗಿನಲ್ಲಿ ಗೋಧಿಯ ಪೈರನ್ನು ಕೊಯ್ಯುತ್ತಿದ್ದರು. ಅವರು ತಮ್ಮ ಕಣ್ಣುಗಳನ್ನು ಎತ್ತಿ ಮಂಜೂಷವನ್ನು ಕಂಡು, ಅದನ್ನು ಕಂಡದ್ದಕ್ಕೆ ಸಂತೋಷಪಟ್ಟರು.</verse>
				<verse number="14">ಆ ಬಂಡಿಯು ಬೇತ್ ಷೆಮೆಷ್ ಊರಿನವನಾದ ಯೆಹೋಶುವನ ಹೊಲದಲ್ಲಿ ಬಂದು ನಿಂತಿತು. ಅಲ್ಲಿ ಒಂದು ದೊಡ್ಡ ಬಂಡೆ ಇತ್ತು. ಆಗ ಅವರು ಆ ಬಂಡಿಯ ಕಟ್ಟಿಗೆಗಳನ್ನು ಸೀಳಿ, ಹಸುಗಳನ್ನು ಯೆಹೋವ ದೇವರಿಗೆ ದಹನಬಲಿಯಾಗಿ ಅರ್ಪಿಸಿದರು.</verse>
				<verse number="15">ಲೇವಿಯರು ಯೆಹೋವ ದೇವರ ಮಂಜೂಷವನ್ನೂ, ಅದರ ಸಂಗಡ ಇದ್ದ ಬಂಗಾರದ ಕಾಣಿಕೆಗಳಿದ್ದ ಚಿಕ್ಕ ಪೆಟ್ಟಿಗೆಯನ್ನೂ ಇಳಿಸಿ, ಆ ದೊಡ್ಡ ಬಂಡೆಯ ಮೇಲಿಟ್ಟುಕೊಂಡರು. ಬೇತ್ ಷೆಮೆಷ್ ಊರಿನವರು ಆ ದಿವಸದಲ್ಲಿ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸಮರ್ಪಣೆಗಳನ್ನೂ ಅರ್ಪಿಸಿದರು.</verse>
				<verse number="16">ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳು ಇವುಗಳನ್ನು ಕಂಡು, ಅದೇ ದಿನದಲ್ಲಿ ತಿರುಗಿ ಎಕ್ರೋನಿಗೆ ಹೋದರು.</verse>
				<verse number="17">ಫಿಲಿಷ್ಟಿಯರು ದೋಷಪರಿಹಾರ ಕಾಣಿಕೆಗಾಗಿ, ಗಡ್ಡೆರೋಗದ ಬಂಗಾರ ಸ್ವರೂಪಗಳನ್ನು ಅಷ್ಡೋದಿನಿಂದ ಒಂದೂ, ಗಾಜನಿಂದ ಒಂದೂ, ಅಷ್ಕೆಲೋನದಿಂದ ಒಂದೂ, ಗತ್‌ನಿಂದ ಒಂದೂ, ಎಕ್ರೋನಿನಿಂದ ಒಂದೂ ಯೆಹೋವ ದೇವರಿಗೆ ಅರ್ಪಿಸಿದರು.</verse>
				<verse number="18">ಅವರು ಕಳುಹಿಸಿದ ಬಂಗಾರದ ಇಲಿಗಳು ಫಿಲಿಷ್ಟಿಯರ ಐದು ಮಂದಿ ಅಧಿಪತಿಗಳ ಬಲವುಳ್ಳ ಪಟ್ಟಣಗಳ, ಗ್ರಾಮಗಳ ಲೆಕ್ಕಕ್ಕೆ ಸರಿಯಾಗಿದ್ದವು. ಯೆಹೋವ ದೇವರ ಮಂಜೂಷವನ್ನಿಟ್ಟ ದೊಡ್ಡ ಬಂಡೆಯು ಇಂದಿನವರೆಗೂ ಬೇತ್ ಷೆಮೆಷ್ ಊರಿನವನಾದ ಯೆಹೋಶುವನ ಹೊಲದಲ್ಲಿ ಸಾಕ್ಷಿಯಾಗಿದೆ.</verse>
				<verse number="19">ಬೇತ್ ಷೆಮೆಷ್ ಊರಿನ ಜನರು ಯೆಹೋವ ದೇವರ ಮಂಜೂಷದೊಳಗೆ ಇಣಿಕಿ ನೋಡಿದ್ದರಿಂದ, ಯೆಹೋವ ದೇವರು ಅವರೊಳಗೆ ಎಪ್ಪತ್ತು ಮಂದಿಯನ್ನು ಕಠಿಣವಾಗಿ ದಂಡಿಸಿದರು.</verse>
				<verse number="20">ಯೆಹೋವ ದೇವರು ತಮ್ಮಲ್ಲಿ ದೊಡ್ಡ ನಾಶನಮಾಡಿದ್ದರಿಂದ, ಬೇತ್ ಷೆಮೆಷ್ ಊರಿನವರು ದುಃಖಪಟ್ಟು, “ಈ ಪರಿಶುದ್ಧ ದೇವರಾದ ಯೆಹೋವ ದೇವರ ಮುಂದೆ ನಿಲ್ಲತಕ್ಕವನ್ಯಾರು? ಇಲ್ಲಿಂದ ಮಂಜೂಷವು ಎಲ್ಲಿಗೆ ಹೋಗುವುದು?” ಎಂದು ಹೇಳಿದರು.</verse>
				<verse number="21">ಅವರು ಕಿರ್ಯತ್ ಯಾರೀಮಿನ ನಿವಾಸಿಗಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರು ಯೆಹೋವ ದೇವರ ಮಂಜೂಷವನ್ನು ತಿರುಗಿ ಕಳುಹಿಸಿದ್ದಾರೆ, ನೀವು ಬಂದು ಅದನ್ನು ನಿಮ್ಮ ಬಳಿಗೆ ತೆಗೆದುಕೊಂಡು ಹೋಗಿರಿ,” ಎಂದು ಹೇಳಿದರು.</verse>
			</chapter>
			<chapter number="7">
				<verse number="1">ಕಿರ್ಯತ್ ಯಾರೀಮಿನವರು ಬಂದು ಯೆಹೋವ ದೇವರ ಮಂಜೂಷವನ್ನು ತೆಗೆದುಕೊಂಡು, ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟರು. ಅವನ ಪುತ್ರನಾದ ಎಲಿಯಾಜರನನ್ನು ಯೆಹೋವ ದೇವರ ಮಂಜೂಷವನ್ನು ಕಾಯಲು ಪ್ರತಿಷ್ಠಿಸಿದರು.</verse>
				<verse number="2">ಮಂಜೂಷವು ಕಿರ್ಯತ್ ಯಾರೀಮಿನಲ್ಲಿ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರ್ಷಗಳಾದವು. ಆಗ, ಇಸ್ರಾಯೇಲ್ ಮನೆತನದವರೆಲ್ಲರು ಯೆಹೋವ ದೇವರಿಗೋಸ್ಕರ ಹಂಬಲಿಸಿ ಗೋಳಾಡುತ್ತಿದ್ದರು.</verse>
				<verse number="3">ಆಗ ಸಮುಯೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ, “ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರ ಕಡೆಗೆ ತಿರುಗಿ, ನಿಮ್ಮಲ್ಲಿರುವ ಅನ್ಯದೇವರುಗಳನ್ನೂ, ಅಷ್ಟೋರೆತನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ, ನಿಮ್ಮ ಹೃದಯವನ್ನು ಯೆಹೋವ ದೇವರಿಗೆ ಸಿದ್ಧಮಾಡಿ, ಅವರೊಬ್ಬರನ್ನೇ ಸೇವಿಸಿದರೆ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಗಳೊಳಗಿಂದ ತಪ್ಪಿಸುವರು,” ಎಂದನು.</verse>
				<verse number="4">ಆಗ ಇಸ್ರಾಯೇಲರು ಬಾಳನನ್ನೂ, ಅಷ್ಟೋರೆತನ್ನೂ ತೆಗೆದುಹಾಕಿ, ಯೆಹೋವ ದೇವರೊಬ್ಬರನ್ನೇ ಸೇವಿಸಿದರು.</verse>
				<verse number="5">ಸಮುಯೇಲನು, “ನಾನು ನಿಮಗೋಸ್ಕರವಾಗಿ ಯೆಹೋವ ದೇವರನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲರನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ,” ಎಂದನು.</verse>
				<verse number="6">ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟಾಗಿ ಕೂಡಿಬಂದು, ಯೆಹೋವ ದೇವರ ಮುಂದೆ ನೀರು ತಂದು ಹೊಯ್ದು, ಆ ದಿವಸದಲ್ಲಿ ಉಪವಾಸ ಮಾಡಿ, “ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ” ಎಂದು ಅಲ್ಲಿ ಹೇಳಿದರು. ಸಮುಯೇಲನು ಇಸ್ರಾಯೇಲರಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.</verse>
				<verse number="7">ಇಸ್ರಾಯೇಲರು ಮಿಚ್ಪೆಯಲ್ಲಿ ಕೂಡಿ ಬಂದರೆಂದು ಫಿಲಿಷ್ಟಿಯರು ಕೇಳಿದಾಗ, ಫಿಲಿಷ್ಟಿಯರ ಅಧಿಪತಿಗಳು ಇಸ್ರಾಯೇಲರಿಗೆ ವಿರೋಧವಾಗಿ ಏರಿ ಬಂದರು. ಆಗ ಇಸ್ರಾಯೇಲರು ಇದನ್ನು ಕೇಳಿ ಫಿಲಿಷ್ಟಿಯರಿಗೋಸ್ಕರ ಭಯಪಟ್ಟು,</verse>
				<verse number="8">ಅವರು ಸಮುಯೇಲನಿಗೆ, “ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವವರೆಗೆ, ನೀನು ನಮಗೋಸ್ಕರವಾಗಿ ಪ್ರಾರ್ಥನೆಮಾಡಿ ಮೊರೆಯಿಡುವುದನ್ನು ನಿಲ್ಲಿಸಬೇಡ,” ಎಂದರು.</verse>
				<verse number="9">ಆಗ ಸಮುಯೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು, ಯೆಹೋವ ದೇವರಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು, ಇಸ್ರಾಯೇಲರಿಗೋಸ್ಕರ ಯೆಹೋವ ದೇವರಿಗೆ ಮೊರೆಯಿಟ್ಟನು. ಯೆಹೋವ ದೇವರು ಅವನಿಗೆ ಉತ್ತರವನ್ನು ದಯಪಾಲಿಸಿದರು.</verse>
				<verse number="10">ಸಮುಯೇಲನು ದಹನಬಲಿಯನ್ನು ಅರ್ಪಿಸುವಾಗ, ಫಿಲಿಷ್ಟಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಲು ಸಮೀಪಕ್ಕೆ ಬಂದರು. ಆಗ ಯೆಹೋವ ದೇವರು ಫಿಲಿಷ್ಟಿಯರ ಮೇಲೆ ದೊಡ್ಡ ಶಬ್ದದಿಂದ ಗುಡುಗಿ ಅವರನ್ನು ಕಳವಳಗೊಳಿಸಿ, ಇಸ್ರಾಯೇಲರಿಗೆ ಸೋತು ಓಡಿಹೋಗುವಂತೆ ಮಾಡಿದರು.</verse>
				<verse number="11">ಆಗ ಇಸ್ರಾಯೇಲರು ಮಿಚ್ಪೆಯಿಂದ ಹೊರಟು, ಫಿಲಿಷ್ಟಿಯರನ್ನು ಹಿಂದಟ್ಟಿ, ಬೇತ್ಕಾರಿನವರೆಗೂ ಅವರನ್ನು ಹೊಡೆದರು.</verse>
				<verse number="12">ಸಮುಯೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ, ಶೇನಿಗೂ ಮಧ್ಯದಲ್ಲಿ ನಿಲ್ಲಿಸಿ, “ಇಲ್ಲಿಯವರೆಗೂ ಯೆಹೋವ ದೇವರು ನಮಗೆ ಸಹಾಯ ಮಾಡಿದ್ದಾರೆ,” ಎಂದು ಹೇಳಿ ಅದಕ್ಕೆ ಎಬೆನೆಜೆರ್ ಎಂದು ಹೆಸರಿಟ್ಟನು.</verse>
				<verse number="13">ಫಿಲಿಷ್ಟಿಯರು ಸೋತುಹೋದುದರಿಂದ ಇಸ್ರಾಯೇಲಿನ ಮೇರೆಯಲ್ಲಿ ಬರಲೇ ಇಲ್ಲ. ಇದಲ್ಲದೆ ಸಮುಯೇಲನು ಇದ್ದ ದಿವಸಗಳೆಲ್ಲಾ ಯೆಹೋವ ದೇವರ ಕೈ ಫಿಲಿಷ್ಟಿಯರಿಗೆ ವಿರೋಧವಾಗಿತ್ತು.</verse>
				<verse number="14">ಫಿಲಿಷ್ಟಿಯರು ಇಸ್ರಾಯೇಲಿನಿಂದ ತೆಗೆದುಕೊಂಡಿದ್ದ ಎಕ್ರೋನ್ ಮೊದಲ್ಗೊಂಡು ಗತ್ ಊರಿನವರೆಗೂ ಇರುವ ಪಟ್ಟಣಗಳನ್ನು ಇಸ್ರಾಯೇಲ್ಯರು ಫಿಲಿಷ್ಟಿಯರಿಂದ ತಿರುಗಿ ತೆಗೆದುಕೊಂಡರು. ಅವುಗಳ ಮೇರೆಗಳನ್ನು ಇಸ್ರಾಯೇಲರು ಫಿಲಿಷ್ಟಿಯರ ಕೈಯಿಂದ ಬಿಡಿಸಿಕೊಂಡರು. ಇಸ್ರಾಯೇಲಿಗೂ, ಅಮೋರಿಯರಿಗೂ ಮಧ್ಯೆ ಸಮಾಧಾನ ಉಂಟಾಗಿತ್ತು.</verse>
				<verse number="15">ಇದಲ್ಲದೆ ಸಮುಯೇಲನು ತಾನು ಬದುಕಿದ ಎಲ್ಲಾ ದಿವಸಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.</verse>
				<verse number="16">ಅವನು ಪ್ರತಿವರ್ಷ ಹೊರಟು ಬೇತೇಲನ್ನೂ, ಗಿಲ್ಗಾಲನ್ನೂ, ಮಿಚ್ಪೆಯನ್ನೂ ಸುತ್ತಿಕೊಂಡು ಹೋಗಿ ಆ ಸ್ಥಳಗಳಲ್ಲೆಲ್ಲಾ ಇಸ್ರಾಯೇಲರಿಗೆ ನ್ಯಾಯತೀರಿಸಿದನು.</verse>
				<verse number="17">ಆದರೆ ಅವನು ರಾಮಕ್ಕೆ ತಿರುಗಿ ಬರುತ್ತಾ ಇದ್ದನು. ಏಕೆಂದರೆ ಅಲ್ಲಿ ಅವನ ಮನೆ ಇತ್ತು, ಅಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು. ಯೆಹೋವ ದೇವರಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.</verse>
			</chapter>
			<chapter number="8">
				<verse number="1">ಸಮುಯೇಲನು ವೃದ್ಧನಾದಾಗ ತನ್ನ ಪುತ್ರರನ್ನು ಇಸ್ರಾಯೇಲಿಗೆ ನ್ಯಾಯಾಧಿಪತಿಗಳನ್ನಾಗಿ ಮಾಡಿದನು.</verse>
				<verse number="2">ಅವನ ಚೊಚ್ಚಲ ಮಗನ ಹೆಸರು ಯೋಯೇಲ್, ಅವನ ಎರಡನೆಯ ಮಗನ ಹೆಸರು ಅಬೀಯ. ಇವರು ಬೇರ್ಷೆಬದಲ್ಲಿ ನ್ಯಾಯಾಧಿಪತಿಗಳಾಗಿದ್ದರು.</verse>
				<verse number="3">ಆದರೆ ಅವರು ಸಮುಯೇಲನ ಮಾರ್ಗದಲ್ಲಿ ನಡೆಯದೆ, ಅಪ್ರಾಮಾಣಿಕತೆಯಿಂದ ಹಣ ಸಂಪಾದಿಸಿ, ಲಂಚವನ್ನು ತೆಗೆದುಕೊಂಡು, ನ್ಯಾಯವನ್ನು ತಪ್ಪಿಸುತ್ತಿದ್ದರು.</verse>
				<verse number="4">ಆಗ ಇಸ್ರಾಯೇಲ್ ಹಿರಿಯರೆಲ್ಲರೂ ಕೂಡಿಕೊಂಡು, ರಾಮದಲ್ಲಿರುವ ಸಮುಯೇಲನ ಬಳಿಗೆ ಬಂದು ಅವನಿಗೆ,</verse>
				<verse number="5">“ನೀನು ವೃದ್ಧನಾದೆ, ನಿನ್ನ ಮಕ್ಕಳು ನಿನ್ನ ಮಾರ್ಗದಲ್ಲಿ ನಡೆಯುವುದಿಲ್ಲ. ಈಗ ಎಲ್ಲ ರಾಷ್ಟ್ರಗಳ ಹಾಗೆ ನಮಗೆ ನ್ಯಾಯತೀರಿಸುವುದಕ್ಕೆ ಒಬ್ಬ ಅರಸನನ್ನು ನೇಮಿಸು,” ಎಂದರು.</verse>
				<verse number="6">“ನಮಗೆ ನ್ಯಾಯತೀರಿಸುವ ಒಬ್ಬ ಅರಸನನ್ನು ನೇಮಿಸು,” ಎಂದು ಅವರು ಹೇಳಿದ್ದು ಸಮುಯೇಲನಿಗೆ ಕೆಟ್ಟದ್ದಾಗಿ ಕಾಣಿಸಿತು. ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿದನು.</verse>
				<verse number="7">ಆಗ ಯೆಹೋವ ದೇವರು ಸಮುಯೇಲನಿಗೆ, “ಜನರು ನಿನಗೆ ಹೇಳಿದ್ದೆಲ್ಲದರಲ್ಲಿ ಅವರ ಮಾತು ಕೇಳು. ಏಕೆಂದರೆ ಅವರು ನಿನ್ನನ್ನು ತಿರಸ್ಕಾರ ಮಾಡಿಲ್ಲ. ನಾನು ಅವರನ್ನು ಆಳದ ಹಾಗೆ ನನ್ನನ್ನೇ ತಿರಸ್ಕಾರಮಾಡಿದ್ದಾರೆ.</verse>
				<verse number="8">ನಾನು ಅವರನ್ನು ಈಜಿಪ್ಟಿನಿಂದ ಬರಮಾಡಿದ ದಿನವು ಮೊದಲುಗೊಂಡು ಈ ದಿನದವರೆಗೂ ಅವರು ನನ್ನನ್ನು ಬಿಟ್ಟು, ಅನ್ಯದೇವರುಗಳನ್ನು ಸೇವಿಸಿ, ಮಾಡಿದ ಸಮಸ್ತ ಕೃತ್ಯಗಳ ಪ್ರಕಾರ ನಿನಗೂ ಮಾಡುತ್ತಾರೆ.</verse>
				<verse number="9">ಈಗ ಅವರ ಮಾತನ್ನು ಕೇಳು. ಆದರೆ ನೀನು ಅವರಿಗೆ ಕಟ್ಟಳೆಯನ್ನು ಕೊಟ್ಟು, ಅವರನ್ನು ಆಳುವ ಅರಸನ ಅಧಿಕಾರವು ಎಂಥದ್ದೆಂಬುದನ್ನು ತಿಳಿಸು,” ಎಂದನು.</verse>
				<verse number="10">ಆಗ ಸಮುಯೇಲನು ಒಬ್ಬ ಅರಸನನ್ನು ಕೇಳಿದ ಜನರಿಗೆ ಯೆಹೋವ ದೇವರ ವಾಕ್ಯಗಳನ್ನೆಲ್ಲಾ ಹೇಳಿದನು.</verse>
				<verse number="11">ಅವನು, “ನಿಮ್ಮನ್ನು ಆಳುವ ಅರಸನ ಅಧಿಕಾರವು ಏನೆಂದರೆ, ಅವನು ನಿಮ್ಮ ಪುತ್ರರನ್ನು ತನ್ನ ರಥಗಳಿಗೋಸ್ಕರ ಸಾರಥಿಗಳನ್ನಾಗಿಯೂ ಕುದುರೆ ಸವಾರರನ್ನಾಗಿಯೂ ತೆಗೆದುಕೊಳ್ಳುವನು. ಕೆಲವರು ಅವನ ರಥಗಳ ಮುಂದೆ ಓಡುವರು.</verse>
				<verse number="12">ಅವನು ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿಗಳಾಗಿಯೂ, ತನ್ನ ಭೂಮಿಯನ್ನು ಊಳುವವರಾಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ಹಾಗು ತನ್ನ ರಥಸಾಮಗ್ರಿಗಳನ್ನು ಮಾಡುವವರಾಗಿಯೂ ನೇಮಿಸುವನು.</verse>
				<verse number="13">ಇದಲ್ಲದೆ ಅವನು ನಿಮ್ಮ ಪುತ್ರಿಯರನ್ನು ತೈಲಗಾರ್ತಿಗಳಾಗಿಯೂ, ಅಡುಗೆ ಮಾಡುವವರಾಗಿಯೂ ರೊಟ್ಟಿ ಸುಡುವವರಾಗಿಯೂ ಇಟ್ಟುಕೊಳ್ಳುವನು.</verse>
				<verse number="14">ಅವನು ಉತ್ತಮವಾದ ನಿಮ್ಮ ಹೊಲಗಳನ್ನೂ, ನಿಮ್ಮ ದ್ರಾಕ್ಷಿತೋಟಗಳನ್ನೂ, ನಿಮ್ಮ ಓಲಿವ್ ಮರದ ತೋಪುಗಳನ್ನೂ ತೆಗೆದುಕೊಂಡು ತನ್ನ ಸೇವಕರಿಗೆ ಕೊಡುವನು.</verse>
				<verse number="15">ನಿಮ್ಮ ಧಾನ್ಯಗಳಲ್ಲಿಯೂ, ನಿಮ್ಮ ದ್ರಾಕ್ಷಿ ಫಲಗಳಲ್ಲಿಯೂ ಹತ್ತರಲ್ಲಿ ಒಂದು ಪಾಲನ್ನು ತೆಗೆದುಕೊಂಡು, ತನ್ನ ಅಧಿಕಾರಿಗಳಿಗೂ, ತನ್ನ ಸೇವಕರಿಗೂ ಕೊಡುವನು.</verse>
				<verse number="16">ನಿಮ್ಮ ದಾಸರನ್ನೂ, ನಿಮ್ಮ ದಾಸಿಯರನ್ನೂ, ನಿಮ್ಮ ಉತ್ತಮ ಪ್ರಾಯಸ್ಥರನ್ನೂ, ನಿಮ್ಮ ಕತ್ತೆಗಳನ್ನೂ ತೆಗೆದುಕೊಂಡು ತನ್ನ ಕೆಲಸಕ್ಕೆ ಇಡುವನು.</verse>
				<verse number="17">ಇದಲ್ಲದೆ ಅವನು ನಿಮ್ಮ ಕುರಿಗಳಲ್ಲಿ ಹತ್ತರಲ್ಲಿ ಒಂದನ್ನು ಆಯ್ದುಕೊಳ್ಳುವನು. ನೀವು ಅವನಿಗೆ ದಾಸರಾಗುವಿರಿ.</verse>
				<verse number="18">ನೀವು ನಿಮಗೆ ಆಯ್ದುಕೊಂಡ ನಿಮ್ಮ ಅರಸನ ನಿಮಿತ್ತ ಆ ದಿವಸದಲ್ಲಿ ಕೂಗುವಿರಿ, ಆದರೆ ಆ ದಿವಸದಲ್ಲಿ ಯೆಹೋವ ದೇವರು ನಿಮಗೆ ಕಿವಿಗೊಡುವುದಿಲ್ಲ,” ಎಂದನು.</verse>
				<verse number="19">ಆದರೂ ಜನರು ಸಮುಯೇಲನ ಮಾತನ್ನು ಕೇಳಲೊಲ್ಲದೆ, ಅವರು, “ಹಾಗಲ್ಲ, ನಮ್ಮ ಮೇಲೆ ಅರಸನು ಇರಬೇಕು.</verse>
				<verse number="20">ನಾವು ಸಕಲ ರಾಷ್ಟ್ರಗಳ ಹಾಗೆ ಇರಬೇಕು. ನಮ್ಮ ಅರಸನು ನಮಗೆ ನ್ಯಾಯತೀರಿಸುವನು. ಅವನು ನಮ್ಮ ಮುಂದೆ ಹೊರಟು, ನಮ್ಮ ಪರವಾಗಿ ಯುದ್ಧಗಳನ್ನು ನಡೆಸುವನು,” ಎಂದರು.</verse>
				<verse number="21">ಸಮುಯೇಲನು ಜನರ ಮಾತುಗಳನ್ನೆಲ್ಲಾ ಕೇಳಿ ಅವುಗಳನ್ನು ಯೆಹೋವ ದೇವರಿಗೆ ಹೇಳಿದನು.</verse>
				<verse number="22">ಯೆಹೋವ ದೇವರು ಸಮುಯೇಲನಿಗೆ, “ಅವರ ಮಾತನ್ನು ಕೇಳಿ ಅವರಿಗೆ ಅರಸನನ್ನು ನೇಮಿಸು,” ಎಂದರು. ಆಗ ಸಮುಯೇಲನು ಇಸ್ರಾಯೇಲ್ ಜನರಿಗೆ, “ನಿಮ್ಮ ನಿಮ್ಮ ಪಟ್ಟಣಗಳಿಗೆ ಹೋಗಿರಿ,” ಎಂದನು.</verse>
			</chapter>
			<chapter number="9">
				<verse number="1">ಬೆನ್ಯಾಮೀನನ ವಂಶದವನಾದ ಕೀಷನೆಂಬ ಒಬ್ಬ ಮನುಷ್ಯನಿದ್ದನು. ಇವನು ಅಬೀಯೇಲನ ಮಗನು, ಇವನು ಚೆರೋರನ ಮಗನು, ಇವನು ಬೆಕೋರತನ ಮಗನು, ಇವನು ಬೆನ್ಯಾಮೀನ್ಯನಾದ ಅಫೀಹನ ಮಗನು. ಇವನು ಐಶ್ವರ್ಯವಂತನಾಗಿದ್ದನು.</verse>
				<verse number="2">ಅವನಿಗೆ ಒಳ್ಳೆಯ ಪ್ರಾಯಸ್ಥನಾದ ಸೌಲನೆಂಬ ಹೆಸರುಳ್ಳ ಒಬ್ಬ ಒಳ್ಳೆಯ ಮಗನಿದ್ದನು. ಇಸ್ರಾಯೇಲರಲ್ಲಿ ಅವನಿಗಿಂತ ಸೌಂದರ್ಯವುಳ್ಳವನು ಒಬ್ಬನಾದರೂ ಇರಲಿಲ್ಲ. ಅವನ ಭುಜವು ಜನರ ಮಧ್ಯೆ ಕಾಣುವಷ್ಟು ಎತ್ತರವಾಗಿದ್ದನು.</verse>
				<verse number="3">ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆ ಹೋದದ್ದರಿಂದ ಅವನು ತನ್ನ ಮಗ ಸೌಲನಿಗೆ, “ನೀನೆದ್ದು ಕೆಲಸದವರಲ್ಲಿ ಒಬ್ಬನನ್ನು ನಿನ್ನ ಸಂಗಡ ಕರೆದುಕೊಂಡು, ಕತ್ತೆಗಳನ್ನು ಹುಡುಕಲು ಹೋಗಬೇಕು,” ಎಂದನು.</verse>
				<verse number="4">ಹಾಗೆಯೇ ಅವನು ಎಫ್ರಾಯೀಮ್ ಬೆಟ್ಟವನ್ನು ಶಾಲಿಷಾ ದೇಶವನ್ನೂ ದಾಟಿಹೋದನು, ಆದರೆ ಅವು ಸಿಕ್ಕಲಿಲ್ಲ. ಶಾಲೀಮ್ ದೇಶವನ್ನು ಹಾದುಹೋದನು, ಅಲ್ಲಿಯೂ ಅವುಗಳು ಕಾಣದೆ ಹೋದವು. ಅವನು ಬೆನ್ಯಾಮೀನನ ದೇಶವನ್ನು ದಾಟಿ, ಅವುಗಳನ್ನು ಕಾಣದೆ ಹೋದನು.</verse>
				<verse number="5">ಅವರು ಚೂಫ್ ಎಂಬ ದೇಶಕ್ಕೆ ಬಂದಾಗ, ಸೌಲನು ತನ್ನ ಸಂಗಡ ಇದ್ದ ಸೇವಕನಿಗೆ, “ನನ್ನ ತಂದೆಯು ಕತ್ತೆಗಳ ಮೇಲೆ ಇರುವ ಚಿಂತೆಯನ್ನು ಬಿಟ್ಟು, ನಮಗೋಸ್ಕರ ಚಿಂತೆ ಪಡದ ಹಾಗೆ ನಾವು ಹಿಂದಕ್ಕೆ ಹೋಗೋಣ ಬಾ,” ಎಂದನು.</verse>
				<verse number="6">ಅದಕ್ಕವನು, “ಇಗೋ, ಈ ಪಟ್ಟಣದಲ್ಲಿ ದೇವರ ಮನುಷ್ಯನು ಒಬ್ಬನಿದ್ದಾನೆ, ಅವನು ಘನವುಳ್ಳ ಮನುಷ್ಯನು. ಅವನು ಹೇಳುವುದೆಲ್ಲಾ ನಿಶ್ಚಯವಾಗಿ ಆಗುವುದು. ಈಗ ನಾವು ಅಲ್ಲಿಗೆ ಹೋಗೋಣ. ಒಂದು ವೇಳೆ ಅವನು ನಾವು ಹೋಗಬೇಕೆಂದಿರುವ ನಮ್ಮ ಮಾರ್ಗವನ್ನು ತಿಳಿಸುವನು,” ಎಂದನು.</verse>
				<verse number="7">ಆಗ ಸೌಲನು ತನ್ನ ಸೇವಕನಿಗೆ, “ನಾವು ಆ ಮನುಷ್ಯನ ಬಳಿಗೆ ಹೋದರೆ, ಏನು ತೆಗೆದುಕೊಂಡು ಹೋಗೋಣ? ನಮ್ಮ ಚೀಲಗಳಲ್ಲಿ ಇರುವ ರೊಟ್ಟಿ ಮುಗಿದು ಹೋಯಿತು. ದೇವರ ಮನುಷ್ಯನ ಬಳಿಗೆ ತೆಗೆದುಕೊಂಡು ಹೋಗಲು ತಕ್ಕ ಕಾಣಿಕೆ ಇಲ್ಲ. ನಮ್ಮ ಬಳಿಯಲ್ಲಿ ಏನಿದೆ?” ಎಂದನು.</verse>
				<verse number="8">ಅದಕ್ಕೆ ಆ ಸೇವಕನು ಸೌಲನಿಗೆ ಉತ್ತರವಾಗಿ, “ಇಗೋ, ನನ್ನ ಕೈಯಲ್ಲಿ ಒಂದು ಪಾವಲಿ ಬೆಳ್ಳಿನಾಣ್ಯ ಇದೆ, ದೇವರ ಮನುಷ್ಯನು ನಮಗೆ ಮಾರ್ಗವನ್ನು ತಿಳಿಸುವ ಹಾಗೆ ನಾನು ಅದನ್ನು ಅವನಿಗೆ ಕೊಡುವೆನು,” ಎಂದನು.</verse>
				<verse number="9">ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ, “ಪ್ರವಾದಿಯ ಬಳಿಗೆ ಹೋಗೋಣ ಬನ್ನಿರಿ,” ಎನ್ನುವನು. ಏಕೆಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಿಸಿಕೊಳ್ಳುವವರನ್ನು ಪೂರ್ವಕಾಲದಲ್ಲಿ ದರ್ಶಿ ಎಂದು ಕರೆಯುತ್ತಿದ್ದರು.</verse>
				<verse number="10">ಆಗ ಸೌಲನು ಸೇವಕನಿಗೆ, “ನಿನ್ನ ಮಾತು ಒಳ್ಳೆಯದು. ನಾವು ಹೋಗೋಣ ಬಾ,” ಎಂದನು. ದೇವರ ಮನುಷ್ಯನಿದ್ದ ಆ ಪಟ್ಟಣಕ್ಕೆ ಹೋದರು.</verse>
				<verse number="11">ಅವರು ದಿಣ್ಣೆಯನ್ನು ಹತ್ತಿ ಪಟ್ಟಣದೊಳಗೆ ಹೋಗುವಾಗ, ನೀರು ಸೇದಲು ಬರುವ ಹುಡುಗಿಯರನ್ನು ಕಂಡು, “ದರ್ಶಿಯು ಇಲ್ಲಿ ಇದ್ದಾನೋ?” ಎಂದು ಅವರನ್ನು ಕೇಳಿದರು.</verse>
				<verse number="12">ಅವರು ಇವರಿಗೆ ಉತ್ತರವಾಗಿ, “ಅವನು ಇದ್ದಾನೆ, ನಿಮ್ಮ ಮುಂದೆ ಇದ್ದಾನೆ, ಈಗ ಬೇಗ ಹೋಗಿರಿ, ಏಕೆಂದರೆ ಈ ಹೊತ್ತು ಗುಡ್ಡದ ಮೇಲೆ ಜನರು ಬಲಿಯನ್ನು ಅರ್ಪಿಸುವುದರಿಂದ ಅವನು ಈ ಹೊತ್ತು ಪಟ್ಟಣಕ್ಕೆ ಬಂದಿದ್ದಾನೆ.</verse>
				<verse number="13">ನೀವು ಪಟ್ಟಣದೊಳಗೆ ಪ್ರವೇಶಿಸುತ್ತಲೇ ಗುಡ್ಡದ ಮೇಲೆ ತಿನ್ನಲು ಹೋಗುವರು. ಅವನು ಬರುವವರೆಗೂ ಜನರು ಏನೂ ತಿನ್ನುವುದಿಲ್ಲ. ಅವನು ಬಂದು ಅರ್ಪಣೆಯನ್ನು ಆಶೀರ್ವದಿಸುವನು. ಅನಂತರವೇ ಆಮಂತ್ರಿತರು ಊಟಮಾಡುವರು. ಈಗಲೇ ಹೋಗಿರಿ. ಈ ವೇಳೆಯಲ್ಲಿ ಅವನನ್ನು ಕಂಡುಕೊಳ್ಳುವಿರಿ,” ಎಂದರು.</verse>
				<verse number="14">ಅವರು ಪಟ್ಟಣಕ್ಕೆ ಹೋದರು. ಅವರು ಪಟ್ಟಣದಲ್ಲಿ ಪ್ರವೇಶಿಸಿದಾಗ, ಸಮುಯೇಲನು ಗುಡ್ಡದ ಮೇಲಕ್ಕೆ ಏರಿ ಹೋಗುವುದಕ್ಕೆ ಅವರಿಗೆದುರಾಗಿ ಹೊರಟುಬಂದನು.</verse>
				<verse number="15">ಆದರೆ ಸೌಲನು ಬರುವುದಕ್ಕೆ ಒಂದು ದಿವಸ ಮುಂಚೆ, ಯೆಹೋವ ದೇವರು ಸಮುಯೇಲನಿಗೆ ತಿಳಿಯಪಡಿಸಿದ್ದೇನೆಂದರೆ,</verse>
				<verse number="16">“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು. ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು. ಏಕೆಂದರೆ ನನ್ನ ಜನರ ಕೂಗು ನನ್ನ ಬಳಿಗೆ ಬಂದು ಮುಟ್ಟಿತು,” ಎಂಬುದೆ.</verse>
				<verse number="17">ಸಮುಯೇಲನು ಸೌಲನನ್ನು ಕಂಡಾಗ ಯೆಹೋವ ದೇವರು, “ಇಗೋ, ನಾನು ನಿನಗೆ ಹೇಳಿದ ಮನುಷ್ಯನು ಇವನೇ. ಇವನೇ ನನ್ನ ಜನರನ್ನು ಆಳುವನು,” ಎಂದರು.</verse>
				<verse number="18">ಸೌಲನು ಊರಿನ ಬಾಗಿಲಲ್ಲಿ ಇರುವ ಸಮುಯೇಲನ ಸಮೀಪಕ್ಕೆ ಬಂದು, ಅವನಿಗೆ, “ದರ್ಶಿಯ ಮನೆಯು ಎಲ್ಲಿ ಇದೆ? ದಯಮಾಡಿ ನೀನು ನನಗೆ ತಿಳಿಸು,” ಎಂದನು.</verse>
				<verse number="19">ಸಮುಯೇಲನು ಸೌಲನಿಗೆ ಉತ್ತರವಾಗಿ, “ದರ್ಶಿಯು ನಾನೇ, ನೀನು ನನ್ನ ಮುಂದೆ ಗುಡ್ಡದ ಮೇಲಕ್ಕೆ ಏರಿ ಹೋಗು. ಈ ಹೊತ್ತು ನೀನು ನನ್ನ ಸಂಗಡ ಊಟಮಾಡಬೇಕು, ನಾಳೆ ಹೊತ್ತಾರೆ ನಿನ್ನನ್ನು ಕಳುಹಿಸುವೆನು. ನಿನ್ನ ಹೃದಯದಲ್ಲಿರುವುದನ್ನೆಲ್ಲಾ ನಿನಗೆ ತಿಳಿಯಪಡಿಸುವೆನು.</verse>
				<verse number="20">ಇಂದಿಗೆ ಮೂರನೆಯ ದಿವಸದಲ್ಲಿ ಕಾಣದೆ ಹೋದ ನಿನ್ನ ಕತ್ತೆಗಳಿಗಾಗಿ ಚಿಂತೆ ಮಾಡಬೇಡ. ಏಕೆಂದರೆ ಅವು ದೊರಕಿದವು. ಇದಲ್ಲದೆ ಇಸ್ರಾಯೇಲಿನ ಅಭಿಲಾಷೆಯೆಲ್ಲಾ ಯಾರ ಮೇಲೆ ಇರುವುದು? ಅದು ನಿನ್ನ ಮೇಲೆಯೇ ಅಲ್ಲವೋ,” ಎಂದನು.</verse>
				<verse number="21">ಸೌಲನು ಅದಕ್ಕೆ, “ಆದರೆ ನಾನು ಇಸ್ರಾಯೇಲನ ಸಣ್ಣ ಗೋತ್ರವಾದ ಬೆನ್ಯಾಮೀನನು ನಾನಲ್ಲವೋ, ಬೆನ್ಯಾಮೀನನ ಗೋತ್ರದಲ್ಲಿ ನನ್ನ ವಂಶವು ಸಣ್ಣದಾದದ್ದಲ್ಲವೋ? ಇಂಥ ಸಂಗತಿಯನ್ನು ನನಗೇಕೆ ಹೇಳುತ್ತೀ?” ಎಂದನು.</verse>
				<verse number="22">ಆಗ ಸಮುಯೇಲನು ಸೌಲನನ್ನೂ, ಅವನ ಸೇವಕನನ್ನೂ ಕರೆತಂದು ಅತಿಥಿಗಳ ಕೊಠಡಿಯಲ್ಲಿ ಮುಖ್ಯವಾದ ಸ್ಥಳಕ್ಕೆ ಕರಕೊಂಡು ಬಂದನು.</verse>
				<verse number="23">ಹೆಚ್ಚು ಕಡಿಮೆ ಮೂವತ್ತು ಜನರಿದ್ದರು. ಸಮುಯೇಲನು ಅಡಿಗೆಯವನಿಗೆ, “ನಾನು ನಿನ್ನ ಕೈಯಲ್ಲಿ ಕೊಟ್ಟು ಇಡಬೇಕೆಂದು ಹೇಳಿದ ಪಾಲನ್ನು ತಂದಿಡು,” ಎಂದನು.</verse>
				<verse number="24">ಆಗ ಅಡಿಗೆಯವನು ಒಂದು ಮುಂದೊಡೆಯನ್ನೂ, ಅದರ ಸಂಗಡ ಇದ್ದುದ್ದನ್ನೂ ತಂದು ಅದನ್ನು ಸೌಲನ ಮುಂದೆ ಇಟ್ಟನು. ಆಗ ಸಮುಯೇಲನು ಸೌಲನಿಗೆ, “ನಿನಗಾಗಿ ಪ್ರತ್ಯೇಕಿಸಿದ್ದು ಇದೇ. ನಾನು ಜನರನ್ನು ಭೋಜನಕ್ಕೆ ಕರೆದಿದ್ದೇನೆಂದು ಹೇಳಿದ ಕಾಲದಿಂದ ಈವರೆಗೂ ನಿನಗೋಸ್ಕರ ಪ್ರತ್ಯೇಕವಾಗಿ ಇಟ್ಟಿದ್ದು ಇದೇ, ಇದನ್ನು ತಿನ್ನು,” ಎಂದನು. ಹಾಗೆಯೇ ಸೌಲನು ಆ ದಿವಸದಲ್ಲಿ ಸಮುಯೇಲನ ಸಂಗಡ ಊಟಮಾಡಿದನು.</verse>
				<verse number="25">ಅವರು ಗುಡ್ಡದಿಂದ ಪಟ್ಟಣಕ್ಕೆ ಇಳಿದು ಬಂದಾಗ ಸಮುಯೇಲನು ಮಾಳಿಗೆಯ ಮೇಲೆ ಸೌಲನ ಸಂಗಡ ಮಾತನಾಡಿದನು.</verse>
				<verse number="26">ಅವರು ಉದಯಕಾಲದಲ್ಲಿ ಸೂರ್ಯೋದಯದಲ್ಲಿ ಎದ್ದಾಗ, ಸಮುಯೇಲನು ಸೌಲನನ್ನು ಮಾಳಿಗೆಗೆ ಕರೆದು, “ಏಳು, ನಾನು ನಿನ್ನನ್ನು ಕಳುಹಿಸುತ್ತೇನೆ,” ಎಂದನು. ಹಾಗೆಯೇ ಸೌಲನು ಎದ್ದನು, ಆಗ ಸೌಲನೂ, ಸಮುಯೇಲನೂ ಇಬ್ಬರೂ ಹೊರಗೆ ಹೊರಟರು.</verse>
				<verse number="27">ಪಟ್ಟಣದ ಹೊರಗೆ ಬಂದಾಗ, ಸಮುಯೇಲನು ಸೌಲನಿಗೆ, “ನಾನು ದೇವರ ಸಂದೇಶವನ್ನು ನಿನಗೆ ತಿಳಿಸುವ ಹಾಗೆ ಸ್ವಲ್ಪ ಹೊತ್ತು ನಿಲ್ಲು. ನಿನ್ನ ಸೇವಕನನ್ನು ನಮ್ಮ ಮುಂದೆ ಹೋಗಲು ಹೇಳು,” ಎಂದನು.</verse>
			</chapter>
			<chapter number="10">
				<verse number="1">ಆಗ ಸಮುಯೇಲನು ಎಣ್ಣೆಕುಪ್ಪಿಯಿಂದ ಅವನ ತಲೆಯ ಮೇಲೆ ಸುರಿದು, ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವ ದೇವರು ನಿನ್ನನ್ನು ತಮ್ಮ ಆಸ್ತಿಯಾಗಿರುವ ಜನರ ಮೇಲೆ ನಾಯಕನಾಗಿರಲು ಅಭಿಷೇಕ ಮಾಡಿದ್ದಾರೆ.</verse>
				<verse number="2">ನೀನು ಈ ಹೊತ್ತು ನನ್ನನ್ನು ಬಿಟ್ಟುಹೋದಾಗ, ಬೆನ್ಯಾಮೀನ್ಯರ ಮೇರೆಯಾದ ಚೆಲ್ಚಹಿನಲ್ಲಿರುವ ರಾಹೇಲಳ ಸಮಾಧಿಯ ಬಳಿಯಲ್ಲಿ ಇಬ್ಬರು ಮನುಷ್ಯರನ್ನು ಕಂಡುಕೊಳ್ಳುವೆ. ಅವರು ನಿನಗೆ, ‘ನೀನು ಹುಡುಕಲು ಹೋದ ಕತ್ತೆಗಳು ಸಿಕ್ಕಿದವು, ನಿನ್ನ ತಂದೆಯು ಕತ್ತೆಗಳ ಚಿಂತೆ ಬಿಟ್ಟು, ನಿನಗೋಸ್ಕರ ಚಿಂತೆಪಟ್ಟು, ತನ್ನ ಮಗನಿಗೋಸ್ಕರ ಏನು ಮಾಡಲಿ? ಎನ್ನುತ್ತಾನೆ,’ ಎಂದು ಹೇಳುವರು.</verse>
				<verse number="3">“ನೀನು ಆ ಸ್ಥಳವನ್ನು ಬಿಟ್ಟು, ಆ ಕಡೆ ದಾಟಿ, ತಾಬೋರಿನ ಹತ್ತಿರವಿರುವ ಅಲ್ಲೋನ್ ವೃಕ್ಷದ ಬಳಿಗೆ ಬರುವಾಗ ಒಬ್ಬನು ಮೂರು ಮೇಕೆಯ ಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸವಿರುವ ಒಂದು ಬುದ್ದಲಿಯನ್ನೂ ಹೊತ್ತುಕೊಂಡು ದೇವರ ಬಳಿಗೆ ಬೇತೇಲಿಗೆ ಹೋಗುವ ಮೂವರನ್ನು ಕಾಣುವೆ.</verse>
				<verse number="4">ಅವರು ನಿನ್ನ ಕ್ಷೇಮಸಮಾಚಾರವನ್ನು ವಿಚಾರಿಸಿ, ನಿನಗೆ ಎರಡು ರೊಟ್ಟಿಗಳನ್ನು ಕೊಡುವರು. ಅವುಗಳನ್ನು ನೀನು ಅವರ ಕೈಯಿಂದ ತೆಗೆದುಕೊಳ್ಳುವೆ.</verse>
				<verse number="5">“ತರುವಾಯ ಫಿಲಿಷ್ಟಿಯರ ತಾಣವಿರುವ ದೇವರ ಗಿಬೆಯ ಗುಡ್ಡಕ್ಕೆ ಹೋಗುವಿ. ಅಲ್ಲಿಂದ ನೀನು ಪಟ್ಟಣಕ್ಕೆ ಪ್ರವೇಶಿಸುವಾಗ, ನಿನಗೆದುರಾಗಿ ವೀಣೆ, ದಮ್ಮಡಿ, ಕೊಳಲು, ಕಿನ್ನರಿಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಮೇಲಿನಿಂದ ಇಳಿದು ಬರುವ ಪ್ರವಾದಿಗಳ ಗುಂಪು ಬರುವುದು. ಅವರು ಪ್ರವಾದಿಸುವರು.</verse>
				<verse number="6">ಆಗ ಯೆಹೋವ ದೇವರ ಆತ್ಮವು ನಿನ್ನ ಮೇಲೆ ಬರುವುದು. ನೀನು ಅವರ ಸಂಗಡ ಪ್ರವಾದಿಸುವೆ, ಬೇರೆ ಮನುಷ್ಯನಾಗಿ ಮಾರ್ಪಡುವೆ.</verse>
				<verse number="7">ಈ ಗುರುತುಗಳೆಲ್ಲಾ ನಿನಗೆ ಸಂಭವಿಸಿದಾಗ, ದೇವರು ನಿನ್ನ ಸಂಗಡ ಇರುವುದರಿಂದ ನೀನು ಆ ವೇಳೆಯಲ್ಲಿ ನಿನಗೆ ಕೈಗೂಡಿದ ಹಾಗೆ ಮಾಡು.</verse>
				<verse number="8">“ಆದರೆ ನೀನು ನನಗೆ ಮುಂದಾಗಿ ಗಿಲ್ಗಾಲಿಗೆ ಇಳಿದು ಹೋಗಬೇಕು. ನಾನು ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸುವುದಕ್ಕಾಗಿ ನಿನ್ನ ಬಳಿಗೆ ಬರುವೆನು. ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವವರೆಗೂ ನೀನು ಅಲ್ಲಿ ಏಳು ದಿವಸ ಕಾದುಕೊಳ್ಳಬೇಕು,” ಎಂದನು.</verse>
				<verse number="9">ಅವನು ಸಮುಯೇಲನನ್ನು ಬಿಟ್ಟುಹೋಗಲು ಹಿಂದಿರುಗಿದಾಗ, ದೇವರು ಅವನಿಗೆ ಹೊಸ ಹೃದಯವನ್ನು ಕೊಟ್ಟರು. ಆ ಸಮಸ್ತ ಗುರುತುಗಳು ಆ ದಿವಸದಲ್ಲಿ ಅವನಿಗೆ ಸಂಭವಿಸಿದವು.</verse>
				<verse number="10">ಅವನು ಗಿಬೆಯದ ಗುಡ್ಡಕ್ಕೆ ಬಂದಾಗ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು. ಆಗ ದೇವರ ಆತ್ಮವು ಅವನ ಮೇಲೆ ಬಂದದ್ದರಿಂದ, ಅವರಲ್ಲಿದ್ದು ಪ್ರವಾದಿಸಿದನು.</verse>
				<verse number="11">ಅದಕ್ಕೆ ಮುಂಚೆ ಅವನನ್ನು ತಿಳಿದವರೆಲ್ಲರು, ಅವನು ಪ್ರವಾದಿಗಳ ಸಂಗಡವಿದ್ದು ಪ್ರವಾದಿಸುವುದನ್ನು ಕಂಡಾಗ, ಅವರು ಒಬ್ಬರ ಸಂಗಡ ಒಬ್ಬರು, “ಕೀಷನ ಮಗನಿಗೆ ಆದದ್ದೇನು? ಸೌಲನೂ ಸಹ ಪ್ರವಾದಿಗಳಲ್ಲಿ ಇದ್ದಾನೋ?” ಎಂದರು.</verse>
				<verse number="12">ಅದಕ್ಕೆ ಅಲ್ಲಿಯವನೊಬ್ಬನು, “ಹಾಗಾದರೆ ಅವರ ನಾಯಕರು ಯಾರು?” ಎಂದನು. ಆದ್ದರಿಂದ, “ಸೌಲನು ಸಹ ಪ್ರವಾದಿಗಳಲ್ಲಿ ಇದ್ದಾನೋ?” ಎಂಬ ಗಾದೆ ಉಂಟಾಯಿತು.</verse>
				<verse number="13">ಅವನು ಪ್ರವಾದಿಸಿದ ತರುವಾಯ ಗುಡ್ಡದ ಮೇಲಕ್ಕೆ ಬಂದನು.</verse>
				<verse number="14">ಆಗ ಸೌಲನ ಚಿಕ್ಕಪ್ಪನು, “ನೀವು ಎಲ್ಲಿಗೆ ಹೋದಿರಿ?” ಎಂದು ಅವನನ್ನೂ, ಅವನ ಸೇವಕನನ್ನೂ ಕೇಳಿದನು. ಅದಕ್ಕವನು, “ಕತ್ತೆಗಳನ್ನು ಹುಡುಕುವುದಕ್ಕೆ, ಅವುಗಳನ್ನು ಕಾಣದೆ ಹೋದುದರಿಂದ ಸಮುಯೇಲನ ಬಳಿಗೆ ಹೋದೆವು,” ಎಂದನು.</verse>
				<verse number="15">ಅದಕ್ಕೆ ಸೌಲನ ಚಿಕ್ಕಪ್ಪನು, “ಸಮುಯೇಲನು ನಿನಗೆ ಏನು ಹೇಳಿದನು? ದಯಮಾಡಿ ನನಗೆ ತಿಳಿಸು,” ಎಂದನು.</verse>
				<verse number="16">ಸೌಲನು ತನ್ನ ಚಿಕ್ಕಪ್ಪನಿಗೆ, “ಕತ್ತೆಗಳು ದೊರಕಿದವೆಂದು ಅವನು ನಮಗೆ ಸ್ಪಷ್ಟವಾಗಿ ತಿಳಿಸಿದನು,” ಎಂದನು. ಆದರೆ ಅವನು ಸಮುಯೇಲನು ಹೇಳಿದ ರಾಜ್ಯಭಾರದ ಮಾತನ್ನು ಅವನಿಗೆ ತಿಳಿಸಲಿಲ್ಲ.</verse>
				<verse number="17">ಸಮುಯೇಲನು ಇಸ್ರಾಯೇಲರನ್ನು ಮಿಚ್ಪೆಯಲ್ಲಿ ಯೆಹೋವ ದೇವರ ಬಳಿಗೆ ಒಟ್ಟಾಗಿ ಕರೆದು ಅವರಿಗೆ,</verse>
				<verse number="18">“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ, ನಿಮ್ಮನ್ನು ಈಜಿಪ್ಟಿನವರ ಕೈಯಿಂದಲೂ, ನಿಮ್ಮನ್ನು ಬಾಧೆಪಡಿಸಿದ ಸಮಸ್ತ ರಾಜ್ಯಗಳ ಕೈಯಿಂದಲೂ ಬಿಡಿಸಿದೆನು.’</verse>
				<verse number="19">ಆದರೆ ನಿಮ್ಮ ಎಲ್ಲಾ ಕೇಡುಗಳಿಂದಲೂ ಇಕ್ಕಟ್ಟುಗಳಿಂದಲೂ ನಿಮ್ಮನ್ನು ತಪ್ಪಿಸಿ ರಕ್ಷಿಸಿದ ನಿಮ್ಮ ದೇವರನ್ನು ನೀವು ಈ ದಿವಸದಲ್ಲಿ ತಿರಸ್ಕರಿಸಿ ಅವರಿಗೆ, ‘ನಮ್ಮ ಮೇಲೆ ಒಬ್ಬ ಅರಸನನ್ನು ನೇಮಿಸು,’ ಎಂದು ಹೇಳಿದಿರಿ. ಆದ್ದರಿಂದ ಈಗ ಯೆಹೋವ ದೇವರ ಮುಂದೆ ನಿಮ್ಮ ಗೋತ್ರಗಳ ಪ್ರಕಾರವಾಗಿಯೂ, ನಿಮ್ಮ ಕುಲಗಳ ಪ್ರಕಾರವಾಗಿಯೂ ಬನ್ನಿರಿ,” ಎಂದನು.</verse>
				<verse number="20">ಸಮುಯೇಲನು ಇಸ್ರಾಯೇಲಿನ ಗೋತ್ರಗಳನ್ನೆಲ್ಲಾ ಸಮೀಪಕ್ಕೆ ಬರಮಾಡಿದಾಗ, ಬೆನ್ಯಾಮೀನನ ಗೋತ್ರಕ್ಕೆ ಚೀಟು ಬಿದ್ದಿತು.</verse>
				<verse number="21">ಅವನು ಬೆನ್ಯಾಮೀನನ ಗೋತ್ರವನ್ನು ಅದರ ಕುಲಗಳ ಹಾಗೆಯೇ ಹತ್ತಿರಕ್ಕೆ ಬರಮಾಡಿದಾಗ, ಮಟ್ರಿಯ ಗೋತ್ರದಲ್ಲಿ ಕೀಷನ ಮಗನಾದ ಸೌಲನಿಗೆ ಚೀಟು ಬಿದ್ದಿತು. ಆದರೆ ಅವನನ್ನು ಹುಡುಕುವಾಗ, ಅವನು ಸಿಕ್ಕಲಿಲ್ಲ.</verse>
				<verse number="22">ಆದ್ದರಿಂದ ಅವರು, “ಅವನು ಇನ್ನು ಇಲ್ಲಿ ಬರುವನೋ?” ಎಂದು ಯೆಹೋವ ದೇವರನ್ನು ವಿಚಾರಿಸಿದರು. ಯೆಹೋವ ದೇವರು, “ಇಗೋ, ಅವನು ಸಲಕರಣೆಗಳಲ್ಲಿ ಅಡಗಿಕೊಂಡಿದ್ದಾನೆ,” ಎಂದು ಹೇಳಿದರು.</verse>
				<verse number="23">ಆಗ ಅವರು ಓಡಿಹೋಗಿ ಅಲ್ಲಿಂದ ಅವನನ್ನು ಕರೆತಂದರು. ಅವನು ಜನರ ಮಧ್ಯದಲ್ಲಿ ನಿಲ್ಲುವಾಗ ಅವನು ತನ್ನ ಭುಜದಿಂದ ಎಲ್ಲಾ ಜನರಿಗಿಂತ ಎತ್ತರವಾಗಿದ್ದನು.</verse>
				<verse number="24">ಆಗ ಸಮುಯೇಲನು, “ಯೆಹೋವ ದೇವರು ಆಯ್ದುಕೊಂಡವನನ್ನು ನೋಡಿರಿ, ಸಮಸ್ತ ಜನರಿಗೆ ಎಲ್ಲಾ ಜನರಲ್ಲಿ ಇವನಿಗೆ ಸಮಾನವಾದವನು ಯಾವನೂ ಇಲ್ಲವಲ್ಲ,” ಎಂದನು. ಜನರೆಲ್ಲರು ಆರ್ಭಟಿಸಿ, “ಅರಸ ಬಾಳಲಿ,” ಎಂದರು.</verse>
				<verse number="25">ಸಮುಯೇಲನು ರಾಜ್ಯದ ಪದ್ಧತಿಯನ್ನು ಜನರಿಗೆ ಹೇಳಿಕೊಟ್ಟು, ಒಂದು ಪುಸ್ತಕದಲ್ಲಿ ಬರೆದು, ಯೆಹೋವ ದೇವರ ಮುಂದೆ ಇಟ್ಟನು. ಆಗ ಸಮುಯೇಲನು ಜನರನ್ನೆಲ್ಲಾ ಅವರವರ ಮನೆಗೆ ಕಳುಹಿಸಿಬಿಟ್ಟನು.</verse>
				<verse number="26">ಸೌಲನು ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು. ದೇವರು ಯಾರ ಹೃದಯವನ್ನು ಮುಟ್ಟಿದರೋ, ಅವರ ಒಂದು ಗುಂಪು ಅವನ ಸಂಗಡ ಹೋಯಿತು.</verse>
				<verse number="27">ಆದರೆ ಕೆಲವು ಪುಂಡಪೋಕರಿಗಳು, “ಇವನು ನಮ್ಮನ್ನು ರಕ್ಷಿಸುವುದೇನು?” ಎಂದು ಅವನನ್ನು ತಿರಸ್ಕರಿಸಿದರು. ಅವರು ಅವನಿಗೆ ಕಾಣಿಕೆಯನ್ನು ತೆಗೆದುಕೊಂಡು ಬರಲಿಲ್ಲ. ಅವನು ಕೇಳದ ಹಾಗೆ ಇದ್ದನು.</verse>
			</chapter>
			<chapter number="11">
				<verse number="1">ಅಮ್ಮೋನಿಯನಾದ ನಾಹಾಷನು ದಂಡೆತ್ತಿ ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ಮುತ್ತಿಗೆಹಾಕಿದನು. ಆಗ ಯಾಬೇಷಿನ ಜನರೆಲ್ಲರು ನಾಹಾಷನಿಗೆ, “ನೀನು ನಮ್ಮ ಸಂಗಡ ಒಡಂಬಡಿಕೆ ಮಾಡಿದರೆ, ನಾವು ನಿನಗೆ ಅಧೀನರಾಗಿರುವೆವು,” ಎಂದರು.</verse>
				<verse number="2">ಅಮ್ಮೋನ್ಯನಾದ ನಾಹಾಷನು ಅವರಿಗೆ, “ಇಸ್ರಾಯೇಲರಿಗೆ ಅವಮಾನಪಡಿಸುವುದಕ್ಕಾಗಿ ನಿಮ್ಮೆಲ್ಲರ ಬಲಗಣ್ಣುಗಳನ್ನು ಕಿತ್ತು ಹಾಕುವ ಒಂದೇ ನಿಬಂಧನೆಯಿಂದ, ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ,” ಎಂದನು.</verse>
				<verse number="3">ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ, “ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಅವಕಾಶವನ್ನು ಕೊಡು. ನಮ್ಮನ್ನು ರಕ್ಷಿಸುವವರು ಯಾರೂ ಇಲ್ಲದೆ ಹೋದರೆ, ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು,” ಎಂದರು.</verse>
				<verse number="4">ದೂತರು ಸೌಲನು ಇರುವ ಗಿಬೆಯಕ್ಕೆ ಬಂದು ಜನರಿಗೆ ಆ ಮಾತುಗಳನ್ನು ಹೇಳಿದರು. ಆಗ ಜನರೆಲ್ಲರೂ ಸ್ವರವನ್ನೆತ್ತಿ ಅತ್ತರು.</verse>
				<verse number="5">ಸೌಲನು ಪಶುಗಳ ಹಿಂದೆ ಹೊಲದಿಂದ ಬಂದು, “ಜನರು ಅಳುವುದೇಕೆ?” ಎಂದು ಕೇಳಿದನು. ಅವರು ಅವನಿಗೆ ಯಾಬೇಷಿನ ಜನರ ಮಾತುಗಳನ್ನು ವಿವರಿಸಿದರು.</verse>
				<verse number="6">ಸೌಲನು ಈ ಮಾತುಗಳನ್ನು ಕೇಳಿದಾಗ, ದೇವರ ಆತ್ಮವು ಬಹಳ ಸಾಮರ್ಥ್ಯದಿಂದ ಅವನ ಮೇಲೆ ಬಂದು, ಅವನು ಬಹು ಕೋಪೋದ್ರೇಕಗೊಂಡನು. ಅನಂತರ ಅವನು ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು,</verse>
				<verse number="7">ಅವುಗಳನ್ನು ತುಂಡುತುಂಡಾಗಿ ಕತ್ತರಿಸಿ, ದೂತರ ಕೈಯಿಂದ ಇಸ್ರಾಯೇಲಿನ ಮೇರೆಗಳಿಗೆಲ್ಲಾ ಕಳುಹಿಸಿ, “ಯಾರು ಸೌಲ ಮತ್ತು ಸಮುಯೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳಿಗೆ ಈ ಪ್ರಕಾರ ಮಾಡಲಾಗುವುದು,” ಎಂದು ಹೇಳಿದನು. ಯೆಹೋವ ದೇವರಿಂದ ಉಂಟಾದ ಭಯ ಜನರ ಮೇಲೆ ಬಿದ್ದದ್ದರಿಂದ, ಅವರು ಒಬ್ಬ ಮನುಷ್ಯನಂತೆ ಹೊರಟು ಬಂದರು.</verse>
				<verse number="8">ಅವನು ಅವರನ್ನು ಬೆಜೆಕಿನಲ್ಲಿ ಎಣಿಸಿದಾಗ, ಇಸ್ರಾಯೇಲರು ಮೂರು ಲಕ್ಷ ಜನರೂ, ಯೆಹೂದ್ಯರಲ್ಲಿ ಮೂವತ್ತು ಸಾವಿರ ಜನರೂ ಆಗಿದ್ದರು.</verse>
				<verse number="9">ಆಗ ಅವರು ಬಂದ ದೂತರಿಗೆ, “ನೀವು ಗಿಲ್ಯಾದಿನಲ್ಲಿರುವ ಯಾಬೇಷಿನ ಜನರಿಗೆ, ‘ನಾಳೆ ಬಿಸಿಲೇರಿದಾಗ ನಿಮಗೆ ಸಹಾಯ ಉಂಟಾಗುವುದು,’ ಎಂದು ಹೇಳಿರಿ,” ಎಂದರು. ಹಾಗೆಯೇ ದೂತರು ಬಂದು ಯಾಬೇಷಿನ ಜನರಿಗೆ ಅದನ್ನು ತಿಳಿಸಿದಾಗ, ಅವರು ಸಂತೋಷಪಟ್ಟರು.</verse>
				<verse number="10">ತರುವಾಯ ಯಾಬೇಷಿನ ಜನರು ನಹಾಷನಿಗೆ, “ನಾಳೆ ನಿನ್ನ ಬಳಿಗೆ ಹೊರಟು ಬರುವೆವು; ಆಗ ನೀನು ನಿನಗೆ ಒಳ್ಳೆಯದಾಗಿ ತೋರುವುದನ್ನೆಲ್ಲಾ ನಮಗೆ ಮಾಡು,” ಎಂದರು.</verse>
				<verse number="11">ಮಾರನೆಯ ದಿವಸದಲ್ಲಿ ಸೌಲನು ಜನರನ್ನು ಮೂರು ಗುಂಪಾಗಿ ಇರಿಸಿ, ಬೆಳಗಿನ ಜಾವದಲ್ಲಿ ಪಾಳೆಯದಲ್ಲಿ ಬಂದು, ಬಿಸಿಲೇರುವವರೆಗೆ ಅಮ್ಮೋನಿಯರನ್ನು ಸಂಹರಿಸಿದನು. ಉಳಿದವರು ಚದರಿಹೋದರು. ಅವರಲ್ಲಿ ಒಬ್ಬರು ಕೂಡ ಇರಲಿಲ್ಲ.</verse>
				<verse number="12">ಆಗ ಜನರು ಸಮುಯೇಲನಿಗೆ, “ಸೌಲನು ನಮ್ಮ ಮೇಲೆ ಆಳುವನೋ ಎಂದು ಹೇಳಿದವರ‍್ಯಾರು? ಆ ಮನುಷ್ಯರನ್ನು ನಮಗೆ ಒಪ್ಪಿಸಿರಿ, ಅವರನ್ನು ಕೊಂದು ಹಾಕುತ್ತೇವೆ,” ಎಂದರು.</verse>
				<verse number="13">ಆಗ ಸೌಲನು, “ಯೆಹೋವ ದೇವರು ಈ ದಿವಸ ಇಸ್ರಾಯೇಲಿನಲ್ಲಿ ರಕ್ಷಣೆಯನ್ನು ಉಂಟುಮಾಡಿದ್ದರಿಂದ, ಈ ಹೊತ್ತು ಯಾರನ್ನೂ ಕೊಲ್ಲಬಾರದು,” ಎಂದನು.</verse>
				<verse number="14">ಆಗ ಸಮುಯೇಲನು ಜನರಿಗೆ, “ನಾವು ಗಿಲ್ಗಾಲಿಗೆ ಹೋಗಿ, ಅಲ್ಲಿ ರಾಜ್ಯತ್ವವನ್ನು ದೃಢೀಕರಿಸೋಣ ಬನ್ನಿರಿ,” ಎಂದನು.</verse>
				<verse number="15">ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ, ಆ ಸ್ಥಳದಲ್ಲಿ ಯೆಹೋವ ದೇವರ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ, ಯೆಹೋವ ದೇವರಿಗೆ ಸಮಾಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲರೂ ಬಹಳವಾಗಿ ಸಂತೋಷಪಟ್ಟರು.</verse>
			</chapter>
			<chapter number="12">
				<verse number="1">ಸಮುಯೇಲನು ಇಸ್ರಾಯೇಲರೆಲ್ಲರಿಗೆ, “ನೀವು ನನಗೆ ಹೇಳಿದ್ದೆಲ್ಲದರಲ್ಲಿ ನಿಮ್ಮ ಮಾತು ಕೇಳಿ, ನಿಮ್ಮ ಮೇಲೆ ಒಬ್ಬ ಅರಸನನ್ನು ಇಟ್ಟೆನು.</verse>
				<verse number="2">ಈಗ ಆ ಅರಸನು ಇನ್ನು ಮುಂದೆ ನಿಮ್ಮನ್ನು ನಡಿಸುತ್ತಾನೆ. ನಾನು ವೃದ್ಧನಾಗಿ ನರೆ ಬಂದವನಾದೆನು. ನನ್ನ ಪುತ್ರರು ನಿಮ್ಮ ಸಂಗಡ ಇದ್ದಾರೆ. ನಾನು ನನ್ನ ಬಾಲ್ಯ ಮೊದಲ್ಗೊಂಡು ಈ ದಿನದವರೆಗೂ ನಿಮ್ಮ ಮುಂದೆ ನಾಯಕನಾಗಿ ನಡೆದುಕೊಂಡಿದ್ದೇನೆ.</verse>
				<verse number="3">ನಾನು ಇಲ್ಲಿದ್ದೇನೆ. ಯೆಹೋವ ದೇವರ ಮುಂದೆಯೂ, ಅವರ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿ ಕೊಡಿರಿ. ನಾನು ಯಾರ ಎತ್ತನ್ನಾದರೂ, ಕತ್ತೆಯನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ, ತಿರುಗಿಕೊಡುತ್ತೇನೆ,” ಎಂದನು.</verse>
				<verse number="4">ಅವರು, “ನೀನು ನಮಗೆ ವಂಚನೆ ಮಾಡಲಿಲ್ಲ, ನಮ್ಮನ್ನು ಹಿಂಸಿಸಲಿಲ್ಲ, ನೀನು ಯಾರ ಕೈಯಿಂದಲೂ ಏನೂ ತೆಗೆದುಕೊಳ್ಳಲಿಲ್ಲ,” ಎಂದರು.</verse>
				<verse number="5">ಆಗ ಅವನು ಅವರಿಗೆ, “ನೀವು ನನ್ನಲ್ಲಿ ಏನಾದರೂ ಕಂಡು ಹಿಡಿಯಲಿಲ್ಲವೆಂಬುದಕ್ಕೆ ಯೆಹೋವ ದೇವರೇ ನಿಮಗೆ ಸಾಕ್ಷಿಯಾಗಿದ್ದಾರೆ. ಅವರ ಅಭಿಷಿಕ್ತನು ಈ ಹೊತ್ತು ಸಾಕ್ಷಿಯಾಗಿದ್ದಾನೆ,” ಎಂದನು. ಅದಕ್ಕವರು, “ಸಾಕ್ಷಿಯಾಗಿದ್ದಾರೆ,” ಎಂದರು.</verse>
				<verse number="6">ಆಗ ಸಮುಯೇಲನು ಜನರಿಗೆ, “ಮೋಶೆಯನ್ನೂ, ಆರೋನನನ್ನೂ ಮುಂದಕ್ಕೆ ತಂದವರೂ, ನಿಮ್ಮ ಪಿತೃಗಳನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಯೆಹೋವ ದೇವರೇ ಇದಕ್ಕೆ ಸಾಕ್ಷಿ.</verse>
				<verse number="7">ಆದ್ದರಿಂದ ಈಗ ನಿಲ್ಲಿರಿ. ಯೆಹೋವ ದೇವರು ನಿಮಗೂ, ನಿಮ್ಮ ಪಿತೃಗಳಿಗೂ ಮಾಡಿದ ಸಮಸ್ತ ನೀತಿಯುಳ್ಳ ಕ್ರಿಯೆಗಳ ವಿಷಯ ಯೆಹೋವ ದೇವರ ಮುಂದೆ ನಿಮಗೆ ನ್ಯಾಯ ಹೇಳುತ್ತೇನೆ.</verse>
				<verse number="8">“ಯಾಕೋಬನು ಈಜಿಪ್ಟಿಗೆ ಬಂದ ತರುವಾಯ, ನಿಮ್ಮ ತಂದೆಗಳು ಯೆಹೋವ ದೇವರಿಗೆ ಮೊರೆಯಿಟ್ಟರು. ಆಗ ಯೆಹೋವ ದೇವರು ಮೋಶೆಯನ್ನೂ, ಆರೋನನನ್ನೂ ಕಳುಹಿಸಿದರು. ಇವರು ನಿಮ್ಮ ಪಿತೃಗಳನ್ನು ಈಜಿಪ್ಟಿನಿಂದ ಕರೆತಂದು, ಅವರನ್ನು ಈ ದೇಶದಲ್ಲಿ ವಾಸಿಸುವಂತೆ ಮಾಡಿದರು.</verse>
				<verse number="9">“ಆದರೆ ಅವರು ತಮ್ಮ ದೇವರಾದ ಯೆಹೋವ ದೇವರನ್ನು ಮರೆತು ಹೋದಾಗ, ದೇವರು ಅವರನ್ನು ಹಾಚೋರಿನ ಸೈನ್ಯಾಧಿಪತಿಯಾದ ಸೀಸೆರನ ಕೈಗೂ, ಫಿಲಿಷ್ಟಿಯರಿಗೂ, ಮೋವಾಬ್ ರಾಜನಿಗೂ ಮಾರಿಬಿಟ್ಟರು.</verse>
				<verse number="10">ಇವರು ಅವರ ಸಂಗಡ ಯುದ್ಧಮಾಡಿದರು. ಆದ್ದರಿಂದ ಅವರು ಯೆಹೋವ ದೇವರಿಗೆ ಮೊರೆಯಿಟ್ಟು, ‘ನಾವು ಯೆಹೋವ ದೇವರಾದ ನಿಮ್ಮನ್ನು ಬಿಟ್ಟು ಬಾಳನನ್ನೂ, ಅಷ್ಟೋರೆತನನ್ನೂ ಸೇವಿಸಿದ್ದರಿಂದ ಪಾಪಮಾಡಿದೆವು. ಈಗ ನೀವು ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ಬಿಡಿಸಿರಿ; ನಾವು ನಿಮ್ಮ ಸೇವೆ ಮಾಡುವೆವು,’ ಎಂದರು.</verse>
				<verse number="11">ಆಗ ಯೆಹೋವ ದೇವರು ಯೆರುಬ್ಬಾಳನನ್ನೂ, ಬಾರಾಕನನ್ನೂ, ಯೆಫ್ತಾಹನನ್ನೂ, ಸಮುಯೇಲನನ್ನೂ ಕಳುಹಿಸಿ, ನಿಮ್ಮ ಸಮಸ್ತ ದಿಕ್ಕಿನಲ್ಲಿರುವ ನಿಮ್ಮ ಶತ್ರುಗಳ ಕೈಯಿಂದ ಬಿಡಿಸಿ, ನೀವು ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.</verse>
				<verse number="12">“ಆದರೆ ಅಮ್ಮೋನ್ಯರ ಅರಸನಾದ ನಾಹಾಷನು ನಿಮಗೆ ವಿರೋಧವಾಗಿ ಯುದ್ಧಮಾಡಲು ಬರುವುದನ್ನು ಕಂಡಾಗ, ನಿಮ್ಮ ದೇವರಾದ ಯೆಹೋವ ದೇವರೇ ನಿಮಗೆ ಅರಸರಾಗಿದ್ದರು. ಆಗ ನೀವು, ‘ನಮಗೆ ಹಾಗೆ ಬೇಡ, ಒಬ್ಬ ಅರಸನು ನಮ್ಮನ್ನು ಆಳಬೇಕು,’ ಎಂದಿರಿ.</verse>
				<verse number="13">ಈಗ ನೀವು ಆರಿಸಿಕೊಂಡು ಅಪೇಕ್ಷಿಸಿದ ಅರಸನು ಇಲ್ಲಿ ಇದ್ದಾನೆ. ಯೆಹೋವ ದೇವರು ನಿಮ್ಮ ಮೇಲೆ ಅವನನ್ನು ಅರಸನನ್ನಾಗಿ ನೇಮಿಸಿದ್ದಾರೆ.</verse>
				<verse number="14">ನೀವು ಯೆಹೋವ ದೇವರ ಮಾತಿಗೆ ವಿರೋಧವಾಗಿ ತಿರುಗಿ ಬೀಳದೆ ಯೆಹೋವ ದೇವರಿಗೆ ಭಯಪಟ್ಟು ಅವರನ್ನು ಸೇವಿಸಿ, ಅವರ ಮಾತಿಗೆ ವಿಧೇಯರಾದರೆ ನೀವೂ, ನಿಮ್ಮ ಮೇಲೆ ಆಳುವ ಅರಸನೂ ನಿಮ್ಮ ದೇವರಾದ ಯೆಹೋವ ದೇವರನ್ನು ತಪ್ಪದೆ ಹಿಂಬಾಲಿಸುವಿರಿ.</verse>
				<verse number="15">ನೀವು ಯೆಹೋವ ದೇವರ ಮಾತಿಗೆ ವಿಧೇಯರಾಗದಿದ್ದರೆ, ಯೆಹೋವ ದೇವರ ಆಜ್ಞೆಗೆ ವಿರೋಧವಾಗಿ ತಿರುಗಿಬಿದ್ದರೆ, ಯೆಹೋವ ದೇವರ ಹಸ್ತವು ನಿಮ್ಮ ಪಿತೃಗಳಿಗೆ ವಿರೋಧವಾಗಿದ್ದಂತೆಯೇ ನಿಮಗೂ ವಿರೋಧವಾಗಿರುವುದು.</verse>
				<verse number="16">“ಈಗ ನಿಂತುಕೊಂಡು ಯೆಹೋವ ದೇವರು ನಿಮ್ಮ ಕಣ್ಣುಗಳ ಮುಂದೆ ಮಾಡುವ ಈ ಮಹತ್ಕಾರ್ಯವನ್ನು ನೋಡಿರಿ.</verse>
				<verse number="17">ಈ ದಿನ ಗೋಧಿಯ ಸುಗ್ಗಿ ಅಲ್ಲವೋ? ನೀವು ನಿಮಗೆ ಒಬ್ಬ ಅರಸನನ್ನು ಕೇಳಿದ್ದರಿಂದ, ಯೆಹೋವ ದೇವರ ದೃಷ್ಟಿಗೆ ನೀವು ಮಾಡಿದ ನಿಮ್ಮ ಕೆಟ್ಟತನವು ಹೆಚ್ಚಾಗಿದೆ ಎಂದು ತಿಳಿದುಕೊಂಡು ನೋಡುವ ಹಾಗೆ, ನಾನು ಯೆಹೋವ ದೇವರಿಗೆ ಮೊರೆಯಿಡುವೆನು. ಆಗ ಅವರು ಗುಡುಗನ್ನೂ, ಮಳೆಯನ್ನೂ ಕಳುಹಿಸುವರು,” ಎಂದನು.</verse>
				<verse number="18">ಸಮುಯೇಲನು ಯೆಹೋವ ದೇವರಿಗೆ ಮೊರೆ ಇಟ್ಟಿದ್ದರಿಂದ, ಆ ದಿವಸದಲ್ಲೇ ಯೆಹೋವ ದೇವರು ಗುಡುಗನ್ನೂ, ಮಳೆಯನ್ನೂ ಕಳುಹಿಸಿದರು. ಆಗ ಜನರೆಲ್ಲರು ಯೆಹೋವ ದೇವರಿಗೂ, ಸಮುಯೇಲನಿಗೂ ಬಹಳವಾಗಿ ಭಯಪಟ್ಟರು.</verse>
				<verse number="19">ಜನರೆಲ್ಲರು ಸಮುಯೇಲನಿಗೆ, “ನಾವು ಸಾಯದ ಹಾಗೆ ನಿನ್ನ ದೇವರಾದ ಯೆಹೋವ ದೇವರಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಏಕೆಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ, ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟದ್ದನ್ನು ಕೂಡಿಸಿದ್ದೇವೆ,” ಎಂದು ಹೇಳಿದರು.</verse>
				<verse number="20">ಆಗ ಸಮುಯೇಲನು ಜನರಿಗೆ, “ನೀವು ಭಯಪಡಬೇಡಿರಿ. ಈ ಕೆಟ್ಟತನವನ್ನೆಲ್ಲಾ ಮಾಡಿದ್ದೀರಿ. ಆದರೂ ಯೆಹೋವ ದೇವರನ್ನು ಬಿಟ್ಟು ತಿರುಗದೆ, ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರನ್ನು ಸೇವಿಸಿರಿ.</verse>
				<verse number="21">ವ್ಯರ್ಥವಾದ ವಸ್ತುಗಳ ಹಿಂದೆ ಹೋಗಬೇಡಿರಿ. ಅವು ನಿಮಗೆ ಒಳ್ಳೆಯದನ್ನು ಮಾಡಲಾರದವುಗಳೂ ನಿಮ್ಮನ್ನು ಬಿಡಿಸಲಾರದವುಗಳೂ ಆಗಿವೆ. ಏಕೆಂದರೆ ಅವು ವ್ಯರ್ಥವಾದವುಗಳಾಗಿವೆ.</verse>
				<verse number="22">ಏಕೆಂದರೆ ಯೆಹೋವ ದೇವರು ತಮ್ಮ ಮಹತ್ತಾದ ಹೆಸರಿಗೋಸ್ಕರ ತಮ್ಮ ಜನರನ್ನು ಕೈಬಿಡುವುದಿಲ್ಲ. ನಿಮ್ಮನ್ನು ತಮ್ಮ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾರಲ್ಲಾ?</verse>
				<verse number="23">ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ, ಯೆಹೋವ ದೇವರಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ. ಉತ್ತಮವಾದ, ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.</verse>
				<verse number="24">ಆದರೆ ನೀವು ಯೆಹೋವ ದೇವರಿಗೆ ಭಯಪಟ್ಟು, ನಿಮ್ಮ ಪೂರ್ಣಹೃದಯದಿಂದ ನಂಬಿಗಸ್ತರಾಗಿ ಅವರನ್ನು ಸೇವಿಸಿರಿ. ಏಕೆಂದರೆ ಅವರು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದರೆಂದು ಆಲೋಚಿಸಿರಿ.</verse>
				<verse number="25">ನೀವು ಕೆಟ್ಟತನವನ್ನು ಇನ್ನೂ ಮಾಡಿದರೆ, ನೀವೂ ನಿಮ್ಮ ಅರಸನೂ ಸಹ ನಾಶವಾಗಿಹೋಗುವಿರಿ,” ಎಂದನು.</verse>
			</chapter>
			<chapter number="13">
				<verse number="1">ಸೌಲನು ಅರಸನಾದಾಗ ಮೂವತ್ತು ವರ್ಷ ಪ್ರಾಯದವನಾಗಿದ್ದನು. ಅವನು ಇಸ್ರಾಯೇಲರ ಮೇಲೆ ನಲವತ್ತೆರಡು ವರ್ಷಕಾಲ ಆಳಿದನು.</verse>
				<verse number="2">ಸೌಲನು ಇಸ್ರಾಯೇಲರೊಳಗಿಂದ ಮೂರು ಸಾವಿರ ಜನ ಪುರುಷರನ್ನು ಆಯ್ದುಕೊಂಡನು. ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯು, ಬೇತೇಲಿನ ದಿನ್ನೆ ಪ್ರದೇಶಗಳಲ್ಲಿಯು ಇದ್ದರು. ಒಂದು ಸಾವಿರ ಜನರು ಬೆನ್ಯಾಮೀನ್ಯರ ಗಿಬೆಯದಲ್ಲಿ ಯೋನಾತಾನನ ಜೊತೆಗಿದ್ದರು. ಉಳಿದ ಜನರನ್ನು ಅವನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.</verse>
				<verse number="3">ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ತಿಳಿದುಬಂತು. ಆದ್ದರಿಂದ ಸೌಲನು ದೇಶದಲ್ಲೆಲ್ಲಾ ಹಿಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು.</verse>
				<verse number="4">“ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ಸೌಲನು ನಾಶಮಾಡಿದ್ದರಿಂದ, ಇಸ್ರಾಯೇಲರು ಈಗ ಫಿಲಿಷ್ಟಿಯರಿಗೆ ಅಸಹ್ಯಕರ ಶತ್ರುವಾದರು,” ಎಂಬ ವರ್ತಮಾನವನ್ನು ಸಮಸ್ತ ಇಸ್ರಾಯೇಲರು ಕೇಳಿದರು. ಮತ್ತು ಗಿಲ್ಗಾಲಿಗೆ ಬಂದು ಸೌಲನನ್ನು ಸೇರಿಕೊಳ್ಳಲು ಜನರನ್ನು ಕರೆದರು.</verse>
				<verse number="5">ಆಗ ಇಸ್ರಾಯೇಲರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ, ಆರು ಸಾವಿರ ಕುದುರೆ ಸವಾರರೂ, ಸಮುದ್ರತೀರದ ಮರಳಷ್ಟು ಜನರೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳಿದುಕೊಂಡರು.</verse>
				<verse number="6">ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದದ್ದರಿಂದ ತಾವು ಇಕ್ಕಟ್ಟಿನಲ್ಲಿ ಇರುವುದನ್ನು ಕಂಡು, ಗವಿಗಳಲ್ಲಿಯೂ, ಮುಳ್ಳಿನ ಪೊದೆಗಳಲ್ಲಿಯೂ, ಗುಡ್ಡಗಳಲ್ಲಿಯೂ, ಕುಣಿಗಳಲ್ಲಿಯೂ ಬಾವಿಗಳಲ್ಲಿಯೂ ಅಡಗಿಕೊಂಡರು.</verse>
				<verse number="7">ಇದಲ್ಲದೆ ಹಿಬ್ರಿಯರಲ್ಲಿ ಕೆಲವರು ಯೊರ್ದನನ್ನು ದಾಟಿ, ಗಾದ್ ದೇಶಕ್ಕೂ, ಗಿಲ್ಯಾದಿಗೂ ಹೋದರು. ಆದರೆ ಸೌಲನು ಇನ್ನೂ ಗಿಲ್ಗಾಲಿನಲ್ಲಿದ್ದನು. ಜನರೆಲ್ಲರು ನಡುಗಿದವರಾಗಿ ಅವನನ್ನು ಹಿಂಬಾಲಿಸಿದರು.</verse>
				<verse number="8">ಸೌಲನು ತನಗೆ ಸಮುಯೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುಯೇಲನು ಗಿಲ್ಗಾಲಿಗೆ ಬಾರದೆ ಇದ್ದುದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು.</verse>
				<verse number="9">ಆಗ ಸೌಲನು, “ದಹನಬಲಿಯನ್ನೂ, ಸಮಾಧಾನದ ಬಲಿಗಳನ್ನೂ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ,” ಎಂದು ಹೇಳಿ ದಹನಬಲಿಯನ್ನು ಅರ್ಪಿಸಿದನು.</verse>
				<verse number="10">ಆದರೆ ಅವನು ದಹನಬಲಿಯನ್ನು ಅರ್ಪಿಸಿ, ತೀರಿಸುವಷ್ಟರೊಳಗೆ ಸಮುಯೇಲನು ಬಂದನು. ಆಗ ಅವನನ್ನು ವಂದಿಸುವುದಕ್ಕಾಗಿ ಸೌಲನು ಅವನನ್ನು ಎದುರುಗೊಳ್ಳಲು ಹೋದನು.</verse>
				<verse number="11">ಆದರೆ ಸಮುಯೇಲನು, “ನೀನೇನು ಮಾಡಿದಿ?” ಎಂದು ಸೌಲನನ್ನು ಕೇಳಿದನು. ಸೌಲನು, “ಸೈನಿಕರು ನನ್ನನ್ನು ಬಿಟ್ಟು ಹೋಗುತ್ತಿರುವುದನ್ನು, ನೀನು ನೇಮಿಸಿದ ದಿವಸಗಳ ಪ್ರಕಾರ ಬಾರದಿರುವುದನ್ನು ಮತ್ತು ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಕೂಡಿಕೊಂಡಿರುವುದನ್ನು ಕಂಡೆನು.</verse>
				<verse number="12">ಆಗ ನಾನು ನನ್ನಲ್ಲಿಯೇ ಯೋಚಿಸುತ್ತಾ, ‘ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ದಾಳಿಮಾಡುವುದು ಖಚಿತ ಮತ್ತು ನಾನು ಎಂದಿಗೂ ಯೆಹೋವ ದೇವರ ಸಹಾಯವನ್ನು ಕೇಳಲಿಲ್ಲ.’ ಆದ್ದರಿಂದ ನನ್ನಲ್ಲಿಯೇ ಆದ ಒತ್ತಡದಿಂದ ದಹನಬಲಿಯನ್ನು ಅರ್ಪಿಸಿದೆನು,” ಎಂದನು.</verse>
				<verse number="13">ಸಮುಯೇಲನು ಸೌಲನಿಗೆ, “ನೀನು ಬುದ್ಧಿಹೀನವಾದ ಕೆಲಸಮಾಡಿದ್ದೀ; ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಗೊಳ್ಳಲಿಲ್ಲ. ಯೆಹೋವ ದೇವರು ಇಸ್ರಾಯೇಲರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವುದಕ್ಕೆ ಇದ್ದರು.</verse>
				<verse number="14">ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಯೆಹೋವ ದೇವರು ನಿನಗೆ ಆಜ್ಞಾಪಿಸಿದ್ದನ್ನು ನೀನು ಕೈಗೊಳ್ಳದೆ ಹೋದದ್ದರಿಂದ, ಅವರು ತಮ್ಮ ಹೃದಯಕ್ಕೆ ತಕ್ಕಂಥ ಒಬ್ಬ ಮನುಷ್ಯನನ್ನು ಹುಡುಕಿ, ಅವನನ್ನು ತಮ್ಮ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾರೆ,” ಎಂದನು.</verse>
				<verse number="15">ಸಮುಯೇಲನು ಎದ್ದು ಗಿಲ್ಗಾಲಿನಿಂದ ಬೆನ್ಯಾಮೀನ್ ದೇಶದ ಗಿಬೆಯಕ್ಕೆ ಹೋದನು. ಸೌಲನು ತನ್ನ ಸಂಗಡ ಇದ್ದ ಜನರನ್ನು ಲೆಕ್ಕಮಾಡಿದಾಗ, ಅವರು ಸುಮಾರು ಆರುನೂರು ಜನರಿದ್ದರು.</verse>
				<verse number="16">ಸೌಲನೂ, ಅವನ ಮಗ ಯೋನಾತಾನನೂ, ಅವನ ಸಂಗಡ ಇರುವ ಜನರೂ ಸಹಿತವಾಗಿ ಬೆನ್ಯಾಮೀನ್ಯರ ಗಿಬೆಯದಲ್ಲಿ ಇದ್ದರು. ಆದರೆ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಇಳಿದುಕೊಂಡಿದ್ದರು.</verse>
				<verse number="17">ಆಗ ಫಿಲಿಷ್ಟಿಯರ ಪಾಳೆಯದಿಂದ ಸುಲಿದುಕೊಳ್ಳುವವರು ಮೂರು ಗುಂಪಾಗಿ ಹೊರಟರು. ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್ ದೇಶದ ಕಡೆಗೆ ಹೋಯಿತು.</verse>
				<verse number="18">ಮತ್ತೊಂದು ಗುಂಪು ಬೇತ್ ಹೋರೋನಿನ ಮಾರ್ಗವಾಗಿ ಹೋಯಿತು. ಬೇರೊಂದು ಗುಂಪು ಮರುಭೂಮಿಗೆ ಎದುರಾಗಿರುವ ಜೆಬೋಯಿಮ್ ತಗ್ಗಿಗೆದುರಾದ ಮೇರೆಯ ಮಾರ್ಗವಾಗಿ ಹೋಯಿತು.</verse>
				<verse number="19">“ಹಿಬ್ರಿಯರು ತಮಗೆ ಖಡ್ಗವನ್ನಾದರೂ ಈಟಿಯನ್ನಾದರೂ ಮಾಡಿಕೊಳ್ಳಬಾರದು,” ಎಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ, ಆಗ ಇಸ್ರಾಯೇಲ್ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ.</verse>
				<verse number="20">ಆದ್ದರಿಂದ ಇಸ್ರಾಯೇಲರೆಲ್ಲಾ ತಮ್ಮ ತಮ್ಮ ನೇಗಿಲಿನ ಗುಳಗಳನ್ನೂ, ಸಲಿಕೆಗಳನ್ನೂ, ಕೊಡಲಿಗಳನ್ನೂ, ಗುದ್ದಲಿಗಳನ್ನೂ ಮೊನೆ ಮಾಡುವುದಕ್ಕೆ ಫಿಲಿಷ್ಟಿಯರ ಬಳಿಗೆ ಹೋಗಬೇಕಾಗಿತ್ತು.</verse>
				<verse number="21">ಆದರೆ ಸಲಿಕೆ, ಗುದ್ದಲಿ, ಕುಂಟೆ, ಮುಳ್ಳುಗೋಲು, ಕೊಡಲಿ, ಅಂಕುಶ ಇವುಗಳನ್ನು ಹದಮಾಡುವುದಕ್ಕೆ ಅವರಲ್ಲಿ ಅರವು ಮಾತ್ರ ಇತ್ತು.</verse>
				<verse number="22">ಯುದ್ಧದ ದಿವಸದಲ್ಲಿ ಸೌಲ ಯೋನಾತಾನರ ಜೊತೆಯಲ್ಲಿದ್ದ ಸಮಸ್ತ ಜನರಲ್ಲಿ ಒಬ್ಬನ ಕೈಯಲ್ಲಾದರೂ ಖಡ್ಗವಾಗಲಿ, ಈಟಿಯಾಗಲಿ ಇರಲಿಲ್ಲ. ಆದರೆ ಸೌಲನಿಗೂ, ಅವನ ಪುತ್ರನಾದ ಯೋನಾತಾನನಿಗೂ ಮಾತ್ರವೇ ಇತ್ತು.</verse>
				<verse number="23">ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗದತ್ತ ಹೊರಟಿತು.</verse>
			</chapter>
			<chapter number="14">
				<verse number="1">ಆ ಕಾಲದಲ್ಲಿ, ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಯುವಕನಿಗೆ, “ನಾವು ನಮಗೆದುರಾಗಿರುವ ಆಚೆಯಲ್ಲಿರುವ ಫಿಲಿಷ್ಟಿಯರ ಠಾಣಕ್ಕೆ ಹೋಗೋಣ ಬಾ,” ಎಂದನು. ಆದರೆ ತಂದೆಗೆ ತಿಳಿಸಲಿಲ್ಲ.</verse>
				<verse number="2">ಸೌಲನು ಗಿಬೆಯದ ಕಟ್ಟಕಡೆಯ ಮೇರೆಯಾದ ಮಿಗ್ರೋನಿನಲ್ಲಿರುವ ದಾಳಿಂಬೆ ಮರದ ಕೆಳಗಿದ್ದನು. ಅವನ ಸಂಗಡ ಸುಮಾರು ಆರುನೂರು ಜನರಿದ್ದರು.</verse>
				<verse number="3">ಆಗ ಏಲಿಯ ಮಗ ಫೀನೆಹಾಸನ ಮಗ ಈಕಾಬೋದನ ಸಹೋದರ ಅಹೀಟೂಬನ ಮಗ ಅಹೀಯನು ಶೀಲೋವಿನಲ್ಲಿ ಏಫೋದನ್ನು ಧರಿಸಿಕೊಂಡು ಯೆಹೋವ ದೇವರ ಯಾಜಕನಾಗಿದ್ದನು. ಆದರೆ ಯೋನಾತಾನನು ಹೋದದ್ದನ್ನು ಜನರು ಅರಿಯದೆ ಇದ್ದರು.</verse>
				<verse number="4">ಯೋನಾತಾನನು ಫಿಲಿಷ್ಟಿಯರ ಠಾಣಕ್ಕೆ ದಾಟಿ ಹೋಗಬೇಕೆಂದು ಹುಡುಕಿದ ಮಾರ್ಗದ ಮಧ್ಯದಲ್ಲಿ ಈ ಕಡೆ ಆ ಕಡೆಯಲ್ಲಿ ಬೊಚೇಚ್, ಸೆನೆ ಎಂಬ ಚೂಪಾದ ಎರಡು ಬಂಡೆಗಳಿದ್ದವು.</verse>
				<verse number="5">ಆ ಬಂಡೆಗಳಲ್ಲಿ ಒಂದು ಉತ್ತರಕ್ಕೆ ಮಿಕ್ಮಾಷಿಗೆ ಎದುರಾಗಿಯೂ, ಮತ್ತೊಂದು ದಕ್ಷಿಣಕ್ಕೆ ಗಿಬೆಯಕ್ಕೆ ಎದುರಾಗಿಯೂ ಇತ್ತು.</verse>
				<verse number="6">ಆಗ ಯೋನಾತಾನನು ತನ್ನ ಆಯುಧಗಳನ್ನು ಹಿಡಿಯುವ ಯುವಕನಿಗೆ, “ನಾವು ಈ ಸುನ್ನತಿ ಇಲ್ಲದವರ ಠಾಣಕ್ಕೆ ದಾಟಿ ಹೋಗೋಣ ಬಾ; ಒಂದು ವೇಳೆ ಯೆಹೋವ ದೇವರು ನಮಗೋಸ್ಕರ ಕಾರ್ಯವನ್ನು ನಡೆಸುವರು. ಏಕೆಂದರೆ ಅನೇಕ ಜನರಿಂದಲಾದರೂ, ಸ್ವಲ್ಪ ಜನರಿಂದಲಾದರೂ ರಕ್ಷಿಸುವುದಕ್ಕೆ ಯೆಹೋವ ದೇವರಿಗೆ ಅಸಾಧ್ಯವಲ್ಲ,” ಎಂದನು.</verse>
				<verse number="7">ಅದಕ್ಕೆ ಅವನ ಆಯುಧಗಳನ್ನು ಹೊರುವವನು ಅವನಿಗೆ, “ನಿನ್ನ ಮನಸ್ಸಿನಲ್ಲಿರುವುದನ್ನೆಲ್ಲಾ ಮಾಡು; ನಡಿ, ನಾನು ನನ್ನ ಸಂಪೂರ್ಣ ಹೃದಯದಿಂದ ನಿನ್ನ ಸಂಗಡ ಇದ್ದೇನೆ,” ಎಂದನು.</verse>
				<verse number="8">ಆಗ ಯೋನಾತಾನನು, “ನಾವು ಆ ಮನುಷ್ಯರ ಬಳಿಗೆ ದಾಟಿ ಹೋಗಿ ಅವರಿಗೆ ಕಾಣಿಸಿಕೊಳ್ಳುವೆವು.</verse>
				<verse number="9">ಅವರು, ‘ನಾವು ನಿಮ್ಮ ಬಳಿಗೆ ಬರುವವರೆಗೆ ಸುಮ್ಮನೆ ನಿಲ್ಲಿರಿ,’ ಎಂದು ನಮ್ಮ ಸಂಗಡ ಹೇಳಿದರೆ; ನಾವು ಅವರ ಬಳಿಗೆ ಹೋಗದೆ ನಮ್ಮ ಸ್ಥಳದಲ್ಲಿ ನಿಲ್ಲುವೆವು.</verse>
				<verse number="10">ಆದರೆ ಅವರು, ‘ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ,’ ಎಂದು ಹೇಳಿದರೆ ನಾವು ಮೇಲೆ ಹತ್ತಿ ಹೋಗೋಣ. ಏಕೆಂದರೆ ಯೆಹೋವ ದೇವರು ಅವರನ್ನು ನಮ್ಮ ಕೈಗೆ ಒಪ್ಪಿಸಿಕೊಟ್ಟರೆಂಬುದಕ್ಕೆ ಇದೇ ನಮಗೆ ಗುರುತಾಗಿರುವುದು,” ಎಂದನು.</verse>
				<verse number="11">ಹಾಗೆಯೇ ಅವರಿಬ್ಬರೂ ತಾವು ಫಿಲಿಷ್ಟಿಯರ ಠಾಣ್ಯದವರೆಗೂ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರು, “ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಹಿಬ್ರಿಯರು ಹೊರಟು ಬರುತ್ತಾರೆ,” ಎಂದರು.</verse>
				<verse number="12">ಠಾಣ್ಯಕ್ಕೆ ಮನುಷ್ಯರು ಯೋನಾತಾನನಿಗೂ, ಅವನ ಆಯುಧ ಹೊರುವವನಿಗೂ, “ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ, ನಿಮಗೆ ಪಾಠ ಕಲಿಸುತ್ತೇನೆ,” ಎಂದು ಕೂಗಿದರು. ಆಗ ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ನನ್ನ ಹಿಂದೆ ಏರಿ ಬಾ. ಏಕೆಂದರೆ ಯೆಹೋವ ದೇವರು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿಕೊಟ್ಟರು,” ಎಂದನು.</verse>
				<verse number="13">ಯೋನಾತಾನನು ತನ್ನ ಕೈಗಳಿಂದಲೂ, ಕಾಲುಗಳಿಂದಲೂ ಹತ್ತಿದನು. ಅವನ ಆಯುಧಗಳನ್ನು ಹೊರುವವನು ಅವನ ಹಿಂದೆ ಹತ್ತಿದನು. ಆಗ ಫಿಲಿಷ್ಟಿಯರು ಯೋನಾತಾನನ ಮುಂದೆ ಬಿದ್ದರು. ಅವನ ಆಯುಧಗಳನ್ನು ಹೊರುವವನು ಅವನ ಹಿಂದೆ ಕೊಲ್ಲುತ್ತಾ ಹೋದನು.</verse>
				<verse number="14">ಯೋನಾತಾನನೂ, ಅವನ ಆಯುಧಗಳನ್ನು ಹೊರುವವನೂ ಹೊಡೆದ ಆ ಮೊದಲ ಸಂಹಾರದಲ್ಲಿ ಅರ್ಧ ಎಕರೆ ಭೂಮಿಯಲ್ಲಿ ಸತ್ತವರು ಸುಮಾರು ಇಪ್ಪತ್ತು ಜನರಾಗಿದ್ದರು.</verse>
				<verse number="15">ಆಗ ಪಾಳೆಯಲ್ಲಿಯ ಹೊಲದಲ್ಲಿ ಇದ್ದ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣ್ಯದವರೂ, ಕೊಳ್ಳೆಗಾರರೂ ಹೆದರಿಕೊಂಡರು. ಇದಲ್ಲದೆ, ದೇವರು ಭೂಕಂಪವನ್ನುಂಟುಮಾಡಿದರು. ಹೀಗೆ ಅಲ್ಲಿ ದೊಡ್ಡ ಕಳವಳವಾಯಿತು.</verse>
				<verse number="16">ಬೆನ್ಯಾಮೀನ್ಯರ ಗಿಬೆಯದಲ್ಲಿದ್ದ ಸೌಲನ ಕಾವಲಿನವರು ಕಂಡಾಗ, ಆ ಗುಂಪಿನವರು ಕರಗಿ ಹೋಗುತ್ತಾ, ಒಬ್ಬರನ್ನೊಬ್ಬರು ಸಂಹರಿಸುತ್ತಾ ಇದ್ದರು.</verse>
				<verse number="17">ಆಗ ಸೌಲನು ತನ್ನ ಬಳಿಯಲ್ಲಿದ್ದ ಜನರಿಗೆ, “ನಮ್ಮ ಬಳಿಯಿಂದ ಹೋದವರು ಯಾರೆಂದು ಲೆಕ್ಕವನ್ನು ನೋಡಿರಿ,” ಎಂದನು. ಅವರು ಲೆಕ್ಕ ನೋಡುವಾಗ, ಯೋನಾತಾನನೂ, ಅವನ ಆಯುಧಗಳನ್ನು ಹೊರುವವನೂ ಇರಲಿಲ್ಲ.</verse>
				<verse number="18">ಆಗ ಸೌಲನು ಅಹೀಯನಿಗೆ, “ನೀನು ದೇವರ ಮಂಜೂಷವನ್ನು ತೆಗೆದುಕೊಂಡು ಬಾ,” ಎಂದನು. ಏಕೆಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲರ ಬಳಿಯಲ್ಲಿತ್ತು.</verse>
				<verse number="19">ಸೌಲನು ಯಾಜಕನ ಸಂಗಡ ಇನ್ನೂ ಮಾತನಾಡುತ್ತಿರುವಾಗ, ಫಿಲಿಷ್ಟಿಯರ ದಂಡಿನಲ್ಲಿ ಕೋಲಾಹಲವು ಹೆಚ್ಚಾಯಿತು. ಆದ್ದರಿಂದ ಸೌಲನು ಯಾಜಕನಿಗೆ, “ನಿನ್ನ ಕೈ ಹಿಂದೆ ತೆಗೆದುಕೋ,” ಎಂದನು.</verse>
				<verse number="20">ಆಗ ಸೌಲನೂ, ಅವನ ಸಂಗಡ ಯುದ್ಧಕ್ಕಿದ್ದ ಜನರೆಲ್ಲರೂ ಕೂಡಿಕೊಂಡು ಯುದ್ಧಕ್ಕೆ ಬಂದಾಗ, ಫಿಲಿಷ್ಟಿಯರಲ್ಲಿ ಗಲಿಬಿಲಿಯುಂಟಾಗಿ ಒಬ್ಬನ ಖಡ್ಗವು ಒಬ್ಬನಿಗೆ ವಿರೋಧವಾಗಿ ಮತ್ತೊಬ್ಬನನ್ನು ಕೊಂದುಹಾಕುತ್ತಿದ್ದರು.</verse>
				<verse number="21">ಇದಲ್ಲದೆ ಪೂರ್ವದಲ್ಲಿ ಫಿಲಿಷ್ಟಿಯರ ಬಳಿಯಲ್ಲಿದ್ದು ಅವರೊಡನೆ ದಂಡಿನ ಸಂಗಡ ಸುತ್ತಲಿರುವ ದೇಶದಿಂದ ಬಂದ ಹಿಬ್ರಿಯರು ಸೌಲ ಮತ್ತು, ಯೋನಾತಾನನ ಜೊತೆ ಇರುವ ಇಸ್ರಾಯೇಲರ ಸಂಗಡ ಕೂಡಿಕೊಂಡರು.</verse>
				<verse number="22">ಫಿಲಿಷ್ಟಿಯರು ಓಡಿಹೋದರೆಂದು ಎಫ್ರಾಯೀಮ್ ಬೆಟ್ಟದಲ್ಲಿ ಅಡಗಿಕೊಂಡಿದ್ದ ಸಮಸ್ತ ಇಸ್ರಾಯೇಲರು ಕೇಳಿದಾಗ, ಅವರೂ ಹಾಗೆಯೇ ಯುದ್ಧದಲ್ಲಿ ಅವರನ್ನು ಬಿಡದೆ ಹಿಂದಟ್ಟಿದ್ದರು.</verse>
				<verse number="23">ಹೀಗೆ ಯೆಹೋವ ದೇವರು ಆ ದಿನದಲ್ಲಿ ಇಸ್ರಾಯೇಲನ್ನು ರಕ್ಷಿಸಿದರು. ಆ ಯುದ್ಧವು ಬೇತಾವೆನಿನವರೆಗೂ ನಡೆಯಿತು.</verse>
				<verse number="24">ಇಸ್ರಾಯೇಲರು ಆ ದಿವಸ ಬಹಳ ಬಳಲಿ ಹೋದರು. ಏಕೆಂದರೆ ಸೌಲನು, “ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾಲದವರೆಗೆ ಯಾವನು ಆಹಾರ ತಿನ್ನುತ್ತಾನೋ, ಅವನು ಶಾಪಗ್ರಸ್ತನಾಗಲಿ,” ಎಂದು ಆಣೆ ಇಟ್ಟದ್ದರಿಂದ, ಜನರೆಲ್ಲರು ಆಹಾರದ ರುಚಿ ನೋಡದೆ ಇದ್ದರು.</verse>
				<verse number="25">ದೇಶದ ಜನರೆಲ್ಲರೂ ಅಡವಿಯಲ್ಲಿ ಹೋಗುತ್ತಿರುವಾಗ, ಅಲ್ಲಿ ನೆಲದ ಮೇಲೆ ಜೇನುಗೂಡು ಇತ್ತು.</verse>
				<verse number="26">ಜನರು ಆ ಅಡವಿಯಲ್ಲಿ ಹೋಗುವಾಗ, ಜೇನುತುಪ್ಪ ಸುರಿಯುತ್ತಿತ್ತು. ಆದರೆ ಜನರು ಆ ಆಣೆಯ ನಿಮಿತ್ತ ಭಯಪಟ್ಟದ್ದರಿಂದ ಒಬ್ಬನಾದರೂ ತನ್ನ ಬಾಯಿಗೆ ಹಾಕಿಕೊಳ್ಳಲಿಲ್ಲ.</verse>
				<verse number="27">ಆದರೆ ಯೋನಾತಾನನು ತನ್ನ ತಂದೆಯು ಜನರಿಗೆ ಆಣೆ ಇಟ್ಟದ್ದನ್ನು ಕೇಳದೆ ಇದ್ದ ಕಾರಣ, ತನ್ನ ಕೈಯಲ್ಲಿದ್ದ ಕೋಲನ್ನು ಚಾಚಿ, ಅದನ್ನು ಜೇನು ತೊಟ್ಟಿಯಲ್ಲಿ ಅದ್ದಿ, ತನ್ನ ಬಾಯಿಗೆ ಹಾಕಿಕೊಂಡನು. ಅದರಿಂದ ಅವನ ಕಣ್ಣುಗಳು ಕಳೆಯನ್ನು ಹೊಂದಿದವು.</verse>
				<verse number="28">ಆಗ ಜನರಲ್ಲಿ ಒಬ್ಬನು ಅವನಿಗೆ, “ ‘ಈ ಹೊತ್ತು ಆಹಾರ ತಿನ್ನುವವರು ಶಾಪಗ್ರಸ್ತರಾಗಲಿ,’ ಎಂದು ನಿನ್ನ ತಂದೆಯು ಜನರಿಗೆ ಕಟ್ಟುನಿಟ್ಟಾಗಿ ಆಣೆ ಇಟ್ಟಿದ್ದಾನೆ. ಅದಕ್ಕೋಸ್ಕರ ಜನರು ದಣಿದು ಹೋಗಿದ್ದಾರೆ,” ಎಂದನು.</verse>
				<verse number="29">ಅದಕ್ಕೆ ಯೋನಾತಾನನು, “ನನ್ನ ತಂದೆಯು ದೇಶವನ್ನು ಶ್ರಮೆಪಡಿಸಿದ್ದಾನೆ. ನಾನು ಈ ಜೇನುತುಪ್ಪದಲ್ಲಿ ಸ್ವಲ್ಪ ರುಚಿ ನೋಡಿದ್ದರಿಂದ, ನನ್ನ ಕಣ್ಣುಗಳು ಹೇಗೆ ಕಳೆಯನ್ನು ಹೊಂದಿದವೆಂದು ನೋಡು.</verse>
				<verse number="30">ಈ ದಿನದಲ್ಲಿ ಜನರು ತಮಗೆ ದೊರಕಿದ ತಮ್ಮ ಶತ್ರುಗಳ ಕೊಳ್ಳೆಯಲ್ಲಿ ಯಾವದನ್ನಾದರೂ ಉಚಿತವಾಗಿ ತಿಂದಿದ್ದರೆ ಎಷ್ಟು ಚೆನ್ನಾಗಿತ್ತು. ಏಕೆಂದರೆ ಫಿಲಿಷ್ಟಿಯರಲ್ಲಿ ಹತರಾಗದವರು ಇನ್ನು ಹೆಚ್ಚು ಮಂದಿ ಇದ್ದಾರೆ,” ಎಂದನು.</verse>
				<verse number="31">ಜನರು ಆ ದಿನದಲ್ಲಿ ಮಿಕ್ಮಾಷಿನಿಂದ ಅಯ್ಯಾಲೋನಿನವರೆಗೂ ಫಿಲಿಷ್ಟಿಯರನ್ನುಳಿಸದೆ ಹೊಡೆದುದರಿಂದ ಅವರು ಬಹಳವಾಗಿ ದಣಿದು ಹೋದರು.</verse>
				<verse number="32">ಆದ್ದರಿಂದ ಅವರು ಕೊಳ್ಳೆ ಹೊಡೆದವುಗಳ ಮೇಲೆ ಬಿದ್ದು ಕುರಿಗಳನ್ನೂ, ದನಗಳನ್ನೂ, ಕರುಗಳನ್ನೂ ಹಿಡಿದು, ನೆಲದ ಮೇಲೆ ಕೊಯ್ದು, ಮಾಂಸವನ್ನು ರಕ್ತದ ಸಂಗಡ ತಿಂದರು.</verse>
				<verse number="33">ಆಗ ಅವರು ಸೌಲನಿಗೆ, “ಇಗೋ, ಜನರು ಮಾಂಸದ ಕೂಡ ರಕ್ತವನ್ನು ತಿನ್ನುವುದರಿಂದ, ಯೆಹೋವ ದೇವರಿಗೆ ವಿರೋಧವಾಗಿ ಪಾಪ ಮಾಡುತ್ತಾರೆ,” ಎಂದು ತಿಳಿಸಿದರು. ಅದಕ್ಕವನು, “ನೀವು ನಂಬಿಕೆದ್ರೋಹ ಮಾಡಿದಿರಿ. ಈಗ ಒಂದು ದೊಡ್ಡ ಕಲ್ಲನ್ನು ನನ್ನ ಬಳಿಗೆ ಹೊರಳಿಸಿ ಬಿಡಿರಿ,” ಅಂದನು.</verse>
				<verse number="34">ಸೌಲನು ಅವರಿಗೆ, “ನೀವು ಜನರಲ್ಲಿ ಚದರಿಹೋಗಿ, ರಕ್ತ ಸಹಿತವಾಗಿ ತಿಂದು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡದೆ, ಪ್ರತಿಯೊಬ್ಬನು ತನ್ನ ಎತ್ತನ್ನೂ, ತನ್ನ ಕುರಿಯನ್ನೂ ನನ್ನ ಬಳಿಗೆ ತಂದು, ಇಲ್ಲಿ ಕೊಯ್ದು ತಿನ್ನಿರಿ ಎಂಬದಾಗಿ ಹೇಳಿರಿ,” ಎಂದನು. ಆದ್ದರಿಂದ ಜನರಲ್ಲಿ ಪ್ರತಿಯೊಬ್ಬನು ತನ್ನ ಎತ್ತನ್ನು ಆ ರಾತ್ರಿಯಲ್ಲಿ ತನ್ನ ಸಂಗಡ ತೆಗೆದುಕೊಂಡು ಬಂದು, ಅಲ್ಲಿ ಕೊಯ್ದನು.</verse>
				<verse number="35">ಸೌಲನು ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸಿದನು. ಅದೇ ಯೆಹೋವ ದೇವರಿಗೆ ಅವನು ಕಟ್ಟಿಸಿದ ಮೊದಲನೆಯ ಬಲಿಪೀಠವು.</verse>
				<verse number="36">ಸೌಲನು ಜನರಿಗೆ, “ನಾವು ಈ ರಾತ್ರಿಯಲ್ಲಿ ಫಿಲಿಷ್ಟಿಯರನ್ನು ಬೆನ್ನಟ್ಟಿ ಹೋಗಿ, ಉದಯಕಾಲದವರೆಗೆ ಅವರನ್ನು ಸುಲಿದುಕೊಂಡು, ಅವರಲ್ಲಿ ಒಬ್ಬನನ್ನಾದರೂ ಉಳಿಸಬಾರದು,” ಎಂದನು. ಅದಕ್ಕೆ ಜನರು, “ನಿನ್ನ ದೃಷ್ಟಿಗೆ ಒಳ್ಳೆಯದಾಗಿ ತೋರುವುದನ್ನೆಲ್ಲಾ ಮಾಡು,” ಎಂದರು. ಆಗ ಯಾಜಕನು, “ದೇವರ ಸನ್ನಿಧಿಗೆ ಹೋಗೋಣ,” ಎಂದನು.</verse>
				<verse number="37">ಅದಕ್ಕೆ ಸೌಲನು, “ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀವು ಅವರನ್ನು ಇಸ್ರಾಯೇಲರ ಕೈಗೆ ಒಪ್ಪಿಸಿಕೊಡುವಿರೋ?” ಎಂದು ದೇವರ ಆಲೋಚನೆಯನ್ನು ಕೇಳಿದನು. ಆದರೆ ಅವರು ಅವನಿಗೆ ಆ ದಿವಸದಲ್ಲಿ ಉತ್ತರ ಕೊಡದೆ ಹೋದರು.</verse>
				<verse number="38">ಆಗ ಸೌಲನು, “ಜನರ ಎಲ್ಲಾ ಮುಖ್ಯಸ್ಥರೇ, ಇಲ್ಲಿ ಬನ್ನಿರಿ. ಈ ಹೊತ್ತು ಈ ಪಾಪ ಯಾವುದರಿಂದ ಉಂಟಾಯಿತೆಂದು ತಿಳಿದುಕೊಂಡು ನೋಡಿರಿ.</verse>
				<verse number="39">ಏಕೆಂದರೆ ನನ್ನ ಪುತ್ರನಾದ ಯೋನಾತಾನನಿಂದಾದರೂ ಉಂಟಾಗಿದ್ದರೆ, ಅವನು ಸತ್ತೇ ಸಾಯುವನೆಂದು ಇಸ್ರಾಯೇಲರನ್ನು ರಕ್ಷಿಸುವ ಯೆಹೋವ ದೇವರ ಮೇಲೆ ಆಣೆ ಇಟ್ಟು ಹೇಳುತ್ತೇನೆ,” ಎಂದನು. ಆದರೆ ಸಮಸ್ತ ಜನರಲ್ಲಿ ಒಬ್ಬನಾದರೂ ಅವನಿಗೆ ಉತ್ತರ ಕೊಡಲಿಲ್ಲ.</verse>
				<verse number="40">ಆಗ ಸೌಲನು ಸಮಸ್ತ ಇಸ್ರಾಯೇಲರಿಗೆ, “ನೀವು ಒಂದು ಕಡೆಯಲ್ಲಿ ಇರಿ. ನಾನೂ, ನನ್ನ ಮಗ ಯೋನಾತಾನನೂ ಒಂದು ಕಡೆಯಲ್ಲಿ ಇರುತ್ತೇವೆ,” ಎಂದನು. ಜನರು ಸೌಲನಿಗೆ, “ನಿನ್ನ ದೃಷ್ಟಿಗೆ ಒಳ್ಳೆಯದಾಗಿ ತೋರುವುದನ್ನು ಮಾಡು,” ಎಂದರು.</verse>
				<verse number="41">ಸೌಲನು ಇಸ್ರಾಯೇಲರ ದೇವರಾದ ಯೆಹೋವ ದೇವರಿಗೆ, “ನೀವು ಪೂರ್ಣ ನಿರ್ಣಯವನ್ನು ದಯಪಾಲಿಸಿರಿ,” ಎಂದು ಹೇಳಿ ಚೀಟು ಹಾಕಿದನು. ಆಗ ಸೌಲನಿಗೂ ಯೋನಾತಾನನಿಗೂ ಚೀಟು ಬಂತು. ಆದರೆ ಜನರು ಪಾರಾದರು.</verse>
				<verse number="42">ಸೌಲನು ಅವರಿಗೆ, “ನನ್ನ ಮೇಲೆಯೂ ನನ್ನ ಮಗ ಯೋನಾತಾನನ ಮೇಲೆಯೂ ಚೀಟುಹಾಕಿರಿ,” ಎಂದಾಗ, ಯೋನಾತಾನನಿಗೆ ಚೀಟು ಬಿತ್ತು.</verse>
				<verse number="43">ಆಗ ಸೌಲನು ಯೋನಾತಾನನಿಗೆ, “ನೀನು ಮಾಡಿದ್ದನ್ನು ನನಗೆ ತಿಳಿಸು,” ಎಂದನು. ಅದಕ್ಕೆ ಯೋನಾತಾನನು, “ನನ್ನ ಕೈಯಲ್ಲಿರುವ ಕೋಲಿನ ಕೊನೆಯಿಂದ ನಾನು ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ರುಚಿ ನೋಡಿದೆನು, ನಾನು ಸಾಯಬೇಕು,” ಎಂದನು.</verse>
				<verse number="44">ಅದಕ್ಕೆ ಸೌಲನು, “ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ,” ಎಂದನು.</verse>
				<verse number="45">ಆದರೆ ಜನರು ಸೌಲನಿಗೆ, “ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆಯನ್ನುಂಟುಮಾಡಿದ ಯೋನಾತಾನನು ಸಾಯಬೇಕೋ? ಎಂದಿಗೂ ಇಲ್ಲ. ಯೆಹೋವ ದೇವರ ಜೀವದಾಣೆ, ಇದನ್ನು ಅವನು ದೇವರ ಸಹಾಯದಿಂದ ಮಾಡಿದ್ದರಿಂದ, ಅವನ ಒಂದು ಕೂದಲು ನೆಲಕ್ಕೆ ಬೀಳಬಾರದು,” ಎಂದು ಹೇಳಿ ಯೋನಾತಾನನು ಸಾಯದ ಹಾಗೆ ಪ್ರಾಯಶ್ಚಿತ್ತವನ್ನು ಮಾಡಿ ಬಿಡಿಸಿಕೊಂಡರು.</verse>
				<verse number="46">ಆಗ ಸೌಲನು ಫಿಲಿಷ್ಟಿಯರನ್ನು ಹಿಂಬಾಲಿಸುವುದನ್ನು ಬಿಟ್ಟುಬಿಟ್ಟನು. ಫಿಲಿಷ್ಟಿಯರು ತಮ್ಮ ಸ್ಥಳಕ್ಕೆ ಹೋದರು.</verse>
				<verse number="47">ಹೀಗೆ ಸೌಲನು ಇಸ್ರಾಯೇಲಿನ ದೊರೆತನವನ್ನು ತೆಗೆದುಕೊಂಡು, ಸುತ್ತಲಿರುವ ತನ್ನ ಸಮಸ್ತ ಶತ್ರುಗಳಾದ ಮೋವಾಬ್ಯರ ಮೇಲೆಯೂ, ಅಮ್ಮೋನ್ಯರ ಮೇಲೆಯೂ, ಎದೋಮ್ಯರ ಮೇಲೆಯೂ, ಚೋಬದ ಅರಸರ ಮೇಲೆಯೂ, ಫಿಲಿಷ್ಟಿಯರ ಮೇಲೆಯೂ ಯುದ್ಧಮಾಡಿದನು. ಯಾರ ಮೇಲೆ ತಿರುಗಿದನೋ, ಅವರನ್ನು ಪೀಡಿಸಿದನು.</verse>
				<verse number="48">ಅವನು ಸೈನ್ಯವನ್ನು ಕೂಡಿಸಿಕೊಂಡು, ಅಮಾಲೇಕ್ಯರನ್ನು ಸಂಹರಿಸಿದನು. ಇಸ್ರಾಯೇಲನ್ನು ಸುಲಿದುಕೊಳ್ಳುವವರ ಸಮಸ್ತರ ಕೈಗೂ ತಪ್ಪಿಸಿದನು.</verse>
				<verse number="49">ಸೌಲನಿಗೆ ಯೋನಾತಾನನೂ, ಇಷ್ವಿಯೂ, ಮಲ್ಕೀಷೂವನೂ ಎಂಬ ಮೂವರು ಪುತ್ರರೂ; ಹಿರಿಯವಳಾದ ಮೇರಬಳು, ಚಿಕ್ಕವಳಾದ ಮೀಕಲಳು ಎಂಬ ಇಬ್ಬರು ಪುತ್ರಿಯರೂ ಇದ್ದರು.</verse>
				<verse number="50">ಅಹೀಮಾಚನ ಪುತ್ರಿಯಾದ ಅಹೀನೋವಮಳು ಸೌಲನ ಹೆಂಡತಿಯಾಗಿದ್ದಳು. ಸೌಲನ ಚಿಕ್ಕಪ್ಪ ನೇರನ ಮಗ ಅಬ್ನೇರನೆಂಬವನು ಅವನ ಸೈನ್ಯಾಧಿಪತಿಯಾಗಿದ್ದನು.</verse>
				<verse number="51">ಸೌಲನ ತಂದೆಯಾದ ಕೀಷನೂ ಅಬ್ನೇರನ ತಂದೆಯಾದ ನೇರನೂ ಅಬೀಯೇಲನ ಮಕ್ಕಳು.</verse>
				<verse number="52">ಸೌಲನ ಜೀವಮಾನದಲ್ಲೆಲ್ಲಾ ಫಿಲಿಷ್ಟಿಯರಿಗೂ ಇಸ್ರಾಯೇಲರಿಗೂ ಘೋರ ಯುದ್ಧ ನಡೆಯುತ್ತಿತ್ತು. ಸೌಲನು ಯಾವ ಪರಾಕ್ರಮಶಾಲಿಯನ್ನಾದರೂ, ಧೈರ್ಯಶಾಲಿಯನ್ನಾದರೂ ಕಂಡರೆ, ಅಂಥವನನ್ನು ತನ್ನ ಸೈನ್ಯಕ್ಕೆ ಸೇರಿಸಿಕೊಳ್ಳುತ್ತಿದ್ದನು.</verse>
			</chapter>
			<chapter number="15">
				<verse number="1">ಸಮುಯೇಲನು ಸೌಲನಿಗೆ, “ಯೆಹೋವ ದೇವರು ತಮ್ಮ ಜನರಾದ ಇಸ್ರಾಯೇಲರ ಮೇಲೆ ನಿನ್ನನ್ನು ಅರಸನಾಗಿರಲು ಅಭಿಷೇಕಿಸಲು ನನ್ನನ್ನು ಕಳುಹಿಸಿದರು. ಈಗ ನೀನು ಯೆಹೋವ ದೇವರ ಮಾತುಗಳನ್ನು ಕೇಳು.</verse>
				<verse number="2">ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಇಸ್ರಾಯೇಲರು ಈಜಿಪ್ಟಿನಿಂದ ಬರುವಾಗ ಅಮಾಲೇಕ್ಯರು ಅವರ ಮಾರ್ಗಕ್ಕೆ ಅಡ್ಡಗಟ್ಟಿ ತೊಂದರೆಪಡಿಸಿದರು, ಆದ್ದರಿಂದ ನಾನು ಅವರಿಗೆ ಮುಯ್ಯಿತೀರಿಸುವೆನು.</verse>
				<verse number="3">ಈಗ ನೀನು ಹೋಗಿ ಅಮಾಲೇಕ್ಯರನ್ನು ಹೊಡೆದು, ಅವರಿಗೆ ಉಂಟಾದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿಬಿಟ್ಟು, ಅವರನ್ನು ಕನಿಕರಿಸದೆ ಪುರುಷರನ್ನೂ, ಸ್ತ್ರೀಯರನ್ನೂ, ಚಿಕ್ಕವರನ್ನೂ, ಹಸುಗೂಸುಗಳನ್ನೂ, ದನಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ, ಕತ್ತೆಗಳನ್ನೂ ಕೊಂದುಹಾಕು,’ ” ಎಂಬದು.</verse>
				<verse number="4">ಆಗ ಸೌಲನು ತೆಲಾಯಿಮಿನಲ್ಲಿ ಜನರನ್ನು ಕೂಡಿಸಿ, ಲೆಕ್ಕ ಮಾಡಿದನು. ಇಸ್ರಾಯೇಲರ ಕಾಲಾಳುಗಳು ಎರಡು ಲಕ್ಷ ಜನರೂ, ಯೆಹೂದನ ಮನುಷ್ಯರು ಹತ್ತು ಸಾವಿರ ಜನರೂ ಇದ್ದರು.</verse>
				<verse number="5">ಸೌಲನು ಅಮಾಲೇಕ್ಯರ ಪಟ್ಟಣದವರೆಗೂ ಬಂದು, ತಗ್ಗಿನಲ್ಲಿ ಹೊಂಚಿಹಾಕಿದ್ದನು.</verse>
				<verse number="6">ಕೇನ್ಯರಿಗೆ, “ಇಸ್ರಾಯೇಲರು ಈಜಿಪ್ಟಿನಿಂದ ಬಂದಾಗ ನೀವು ಅವರೆಲ್ಲರಿಗೆ ದಯೆ ತೋರಿಸಿದ್ದರಿಂದ, ನಾನು ನಿಮ್ಮನ್ನು ಅಮಾಲೇಕ್ಯರ ಸಂಗಡ ನಾಶಮಾಡದ ಹಾಗೆ, ನೀವು ಅವರ ಮಧ್ಯದಲ್ಲಿಂದ ಹೊರಟು ಹೋಗಿರಿ,” ಎಂದು ಹೇಳಿದನು. ಹಾಗೆಯೇ ಕೇನ್ಯರು ಅಮಾಲೇಕ್ಯರ ಮಧ್ಯದಿಂದ ಹೊರಟು ಹೋದರು.</verse>
				<verse number="7">ಆಗ ಸೌಲನು ಹವೀಲದಿಂದ ಈಜಿಪ್ಟಿನ ಪೂರ್ವದಿಕ್ಕಿನಲ್ಲಿರುವ ಶೂರಿಗೆ ಹೋಗುವ ಮೇರೆಯವರೆಗೂ ಇದ್ದ ಅಮಾಲೇಕ್ಯರನ್ನು ಹೊಡೆದು,</verse>
				<verse number="8">ಅಮಾಲೇಕ್ಯರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದನು, ಆದರೆ ಸಮಸ್ತ ಜನರನ್ನು ಖಡ್ಗದಿಂದ ಸಂಪೂರ್ಣ ನಾಶಮಾಡಿದನು.</verse>
				<verse number="9">ಸೌಲನೂ, ಅವನ ಜನರೂ ಅಗಾಗನನ್ನೂ ಮೇಲ್ತರವಾದ ಕುರಿಗಳನ್ನೂ ದನಗಳನ್ನೂ ಕುರಿಮರಿಗಳನ್ನೂ, ಉತ್ತಮವಾದ ಸಮಸ್ತವನ್ನೂ ಕನಿಕರಿಸಿದರು. ಅವುಗಳನ್ನು ಸಂಪೂರ್ಣ ನಾಶಮಾಡಲು ಮನಸ್ಸಿಲ್ಲದೆ ಇದ್ದರು. ಆದರೆ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿದರು.</verse>
				<verse number="10">ಆಗ ಯೆಹೋವ ದೇವರ ವಾಕ್ಯವು ಸಮುಯೇಲನಿಗೆ ಉಂಟಾಗಿ,</verse>
				<verse number="11">“ನಾನು ಸೌಲನನ್ನು ಅರಸನಾಗಿ ಮಾಡಿದ್ದರಿಂದ ದುಃಖಪಡುತ್ತೇನೆ. ಏಕೆಂದರೆ ಅವನು ನನ್ನನ್ನು ಹಿಂಬಾಲಿಸುವುದನ್ನು ಬಿಟ್ಟು, ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ,” ಎಂದರು. ಅದಕ್ಕೆ ಸಮುಯೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವ ದೇವರಿಗೆ ಮೊರೆಯಿಟ್ಟನು.</verse>
				<verse number="12">ಸಮುಯೇಲನು ಉದಯಕಾಲದಲ್ಲೆದ್ದು ಸೌಲನನ್ನು ಎದುರುಗೊಳ್ಳಲು ಹೋದನು. ಆಗ ಅವನಿಗೆ ಹೀಗೆ ಹೇಳಲಾಗಿತ್ತು, “ಸೌಲನು ತನ್ನ ನೆನಪಿಗಾಗಿ ಒಂದು ಸ್ಮಾರಕವನ್ನು ನಿರ್ಮಿಸಲು ಕರ್ಮೆಲಿಗೆ ಹೋಗಿದ್ದಾನೆ. ನಂತರ ಅಲ್ಲಿಂದ ಮುಂದೆ ಹೋಗಿ ಗಿಲ್ಗಾಲಿಗೆ ಹೋಗಿದ್ದಾನೆ.”</verse>
				<verse number="13">ಸಮುಯೇಲನು ಸೌಲನ ಬಳಿಗೆ ಬಂದಾಗ, ಸೌಲನು ಅವನಿಗೆ, “ನಿನಗೆ ಯೆಹೋವ ದೇವರ ಆಶೀರ್ವಾದವಾಗಲಿ; ನಾನು ಯೆಹೋವ ದೇವರ ಆಜ್ಞೆಯನ್ನು ಈಡೇರಿಸಿದೆನು,” ಎಂದನು.</verse>
				<verse number="14">ಆಗ ಸಮುಯೇಲನು ಅವನಿಗೆ, “ನನ್ನ ಕಿವಿಗಳಲ್ಲಿ ಬೀಳುವ ಆ ಕುರಿಗಳ ಶಬ್ದವೇನು? ನಾನು ಕೇಳುವ ಪಶುಗಳ ಶಬ್ದವೇನು?” ಎಂದನು.</verse>
				<verse number="15">ಅದಕ್ಕೆ ಸೌಲನು, “ಜನರು ಅಮಾಲೇಕ್ಯರ ಬಳಿಯಿಂದ ತೆಗೆದುಕೊಂಡು ಬಂದವುಗಳು; ಏಕೆಂದರೆ ನಿನ್ನ ದೇವರಾದ ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸುವುದಕ್ಕೋಸ್ಕರ ಮೇಲ್ತರವಾದ ಪಶುಕುರಿಗಳನ್ನು ಉಳಿಸಿಟ್ಟು, ಮಿಕ್ಕಾದವುಗಳನ್ನೆಲ್ಲಾ ಸಂಪೂರ್ಣ ನಾಶಮಾಡಿಬಿಟ್ಟೆವು,” ಎಂದನು.</verse>
				<verse number="16">ಆಗ ಸಮುಯೇಲನು ಸೌಲನಿಗೆ, “ಅದಿರಲಿ, ಯೆಹೋವ ದೇವರು ಕಳೆದ ರಾತ್ರಿಯಲ್ಲಿ ನನಗೆ ಹೇಳಿದ್ದನ್ನು ನಿನಗೆ ತಿಳಿಸುವೆನು,” ಎಂದನು. ಅದಕ್ಕವನು, “ಹೇಳು,” ಎಂದನು.</verse>
				<verse number="17">ಆಗ ಸಮುಯೇಲನು, “ನೀನು ನಿನ್ನ ದೃಷ್ಟಿಯಲ್ಲಿ ಚಿಕ್ಕವನಾಗಿರುವಾಗಲೇ ಇಸ್ರಾಯೇಲ್ ಗೋತ್ರಗಳ ಮೇಲೆ ಯಜಮಾನನಾಗಿ ನೇಮಕವಾದಿಯಲ್ಲವೆ? ಯೆಹೋವ ದೇವರು ನಿನ್ನನ್ನು ಇಸ್ರಾಯೇಲರ ಮೇಲೆ ಅರಸನಾಗಿ ಅಭಿಷೇಕಿಸಿದರಲ್ಲವೆ?</verse>
				<verse number="18">ಯೆಹೋವ ದೇವರು ನಿನಗೆ, ‘ಹೋಗು ಪಾಪಿಷ್ಠರಾದ ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿ, ಅವರು ತೀರಿ ಹೋಗುವವರೆಗೂ ಅವರ ಸಂಗಡ ಯುದ್ಧಮಾಡಬೇಕು,’ ಎಂದು ಆಜ್ಞಾಪಿಸಿದರು.</verse>
				<verse number="19">ಹೀಗಿರುವಾಗ ನೀನು ಏಕೆ ಯೆಹೋವ ದೇವರ ಮಾತಿಗೆ ವಿಧೇಯನಾಗದೆ, ಕೊಳ್ಳೆಯ ಮೇಲೆ ಬಿದ್ದು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ?” ಎಂದನು.</verse>
				<verse number="20">ಆಗ ಸೌಲನು ಸಮುಯೇಲನಿಗೆ, “ಹೌದು, ನಾನು ಯೆಹೋವ ದೇವರ ಮಾತಿಗೆ ವಿಧೇಯನಾಗಿ ಯೆಹೋವ ದೇವರು ನನ್ನನ್ನು ಕಳುಹಿಸಿದ ಮಾರ್ಗವಾಗಿ ಹೋಗಿ, ಅಮಾಲೇಕ್ಯರ ಅರಸನಾದ ಅಗಾಗನನ್ನು ಹಿಡಿದುಕೊಂಡು ಬಂದು, ಅಮಾಲೇಕ್ಯರನ್ನು ಸಂಪೂರ್ಣ ನಾಶಮಾಡಿದೆನು.</verse>
				<verse number="21">ಆದರೆ ಜನರು ನಿನ್ನ ದೇವರಾದ ಯೆಹೋವ ದೇವರಿಗೆ ಗಿಲ್ಗಾಲಿನಲ್ಲಿ ಬಲಿ ಕೊಡುವುದಕ್ಕಾಗಿ ಕೊಳ್ಳೆಯಲ್ಲಿ ಸಂಪೂರ್ಣವಾಗಿ ನಾಶಮಾಡಬೇಕೆಂದಿರುವ ದನಕುರಿಗಳಲ್ಲಿ ಉತ್ತಮವಾದವುಗಳನ್ನು ಹಿಡಿದುಕೊಂಡು ಬಂದರು,” ಎಂದನು.</verse>
				<verse number="22">ಅದಕ್ಕೆ ಸಮುಯೇಲನು ಹೇಳಿದ್ದೇನೆಂದರೆ, “ಯೆಹೋವ ದೇವರ ವಾಕ್ಯಕ್ಕೆ ವಿಧೇಯನಾದರೆ, ಯೆಹೋವ ದೇವರಿಗೆ ಆಗುವ ಸಂತೋಷ ದಹನಬಲಿಗಳಲ್ಲಿಯೂ ಯಜ್ಞಗಳಲ್ಲಿಯೂ ಆಗುವುದೋ? ಇಗೋ, ಯಜ್ಞಕ್ಕಿಂತ ವಿಧೇಯತೆಯು, ಟಗರುಗಳ ಕೊಬ್ಬಿಗಿಂತ ಮಾತುಕೇಳುವುದೇ ಉತ್ತಮವಾಗಿರುವುದು.</verse>
				<verse number="23">ಏಕೆಂದರೆ ಪ್ರತಿಭಟಿಸುವುದು ಮಂತ್ರತಂತ್ರಗಳಷ್ಟು ಪಾಪವಾಗಿದೆ. ಹಟಮಾರಿತನವು ದುಷ್ಟತನಕ್ಕೂ ವಿಗ್ರಹಾರಾಧನೆಗೂ ಸಮಾನವಾಗಿದೆ. ನೀನು ಯೆಹೋವ ದೇವರ ವಾಕ್ಯವನ್ನು ಅಲಕ್ಷ್ಯಮಾಡಿದ್ದರಿಂದ ಅವರು ನಿನ್ನನ್ನು ಅರಸನಾಗಿರದ ಹಾಗೆ ತಿರಸ್ಕರಿಸಿಬಿಟ್ಟಿದ್ದಾರೆ.”</verse>
				<verse number="24">ಆಗ ಸೌಲನು ಸಮುಯೇಲನಿಗೆ, “ನಾನು ಯೆಹೋವ ದೇವರ ಆಜ್ಞೆಯನ್ನೂ, ನಿನ್ನ ಮಾತುಗಳನ್ನೂ ಮೀರಿದ್ದರಿಂದ ನಾನು ಪಾಪಮಾಡಿದೆನು. ನಾನು ಜನರಿಗೆ ಭಯಪಟ್ಟು ಅವರ ಮಾತನ್ನು ಕೇಳಿದೆನು.</verse>
				<verse number="25">ಆದ್ದರಿಂದ ಈಗ ದಯಮಾಡಿ ನನ್ನ ಪಾಪವನ್ನು ಕ್ಷಮಿಸಿ, ನಾನು ಯೆಹೋವ ದೇವರನ್ನು ಆರಾಧಿಸುವ ಹಾಗೆ ನನ್ನ ಸಂಗಡ ತಿರುಗಿ ಬಾ,” ಎಂದು ಬೇಡಿಕೊಂಡನು.</verse>
				<verse number="26">ಆದರೆ ಸಮುಯೇಲನು ಸೌಲನಿಗೆ, “ನಾನು ನಿನ್ನ ಸಂಗಡ ಹಿಂದಿರುಗಿ ಬರುವುದಿಲ್ಲ. ಏಕೆಂದರೆ ನೀನು ಯೆಹೋವ ದೇವರ ವಾಕ್ಯವನ್ನು ತಿರಸ್ಕರಿಸಿದ್ದೀ. ಯೆಹೋವ ದೇವರು ನಿನ್ನನ್ನು ಇಸ್ರಾಯೇಲರ ಮೇಲೆ ಅರಸನಾಗಿರದ ಹಾಗೆ ತಿರಸ್ಕಾರಮಾಡಿಬಿಟ್ಟರು,” ಎಂದು ಹೇಳಿದನು.</verse>
				<verse number="27">ಸಮುಯೇಲನು ಹೋಗುವುದಕ್ಕೋಸ್ಕರ ತಿರುಗಿಕೊಳ್ಳುವಾಗ ಸೌಲನು ಅವನ ವಸ್ತ್ರದ ಕೊನೆಯನ್ನು ಹಿಡಿದುಕೊಂಡನು. ಆಗ ಅದು ಹರಿದುಹೋಯಿತು.</verse>
				<verse number="28">ಸಮುಯೇಲನು ಅವನಿಗೆ, “ನಿನ್ನ ಬಳಿಯಿಂದ ಇಸ್ರಾಯೇಲಿನ ರಾಜ್ಯವನ್ನು ಯೆಹೋವ ದೇವರು ಈ ಹೊತ್ತು ಕಿತ್ತು, ನಿನಗಿಂತ ಒಳ್ಳೆಯವನಾಗಿರುವ ನಿನ್ನ ನೆರೆಯವನಿಗೆ ಅದನ್ನು ಕೊಟ್ಟರು.</verse>
				<verse number="29">ಇಸ್ರಾಯೇಲಿನ ಪ್ರತಾಪರು ಸುಳ್ಳು ಹೇಳುವವರಲ್ಲ, ಮಾತನ್ನು ಹಿಂತೆಗೆದುಕೊಳ್ಳುವವರಲ್ಲ. ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದನು.</verse>
				<verse number="30">ಅದಕ್ಕವನು, “ನಾನು ಪಾಪವನ್ನು ಮಾಡಿದೆನು. ಆದರೆ ಈಗ ನೀನು ದಯಮಾಡಿ ನನ್ನ ಜನರ ಹಿರಿಯರ ಮುಂದೆಯೂ, ಇಸ್ರಾಯೇಲರ ಮುಂದೆಯೂ ನನ್ನನ್ನು ಘನಪಡಿಸು. ನಾನು ನಿನ್ನ ದೇವರಾದ ಯೆಹೋವ ದೇವರಿಗೆ ಆರಾಧಿಸುವ ಹಾಗೆ ನೀನು ನನ್ನ ಸಂಗಡ ಹಿಂದಿರುಗಿ ಬಾ,” ಎಂದನು.</verse>
				<verse number="31">ಹಾಗೆಯೇ ಸಮುಯೇಲನು ತಿರುಗಿ ಸೌಲನ ಹಿಂದೆ ಹೋದನು. ಸೌಲನು ಯೆಹೋವ ದೇವರನ್ನು ಆರಾಧಿಸಿದನು.</verse>
				<verse number="32">ಸಮುಯೇಲನು, “ಅಮಾಲೇಕ್ಯರ ಅರಸನಾದ ಅಗಾಗನನ್ನು ನನ್ನ ಬಳಿಗೆ ತನ್ನಿರಿ,” ಎಂದನು. ಅಗಾಗನು ಆನಂದವಾಗಿ ಅವನ ಬಳಿಗೆ ಹೋಗಿ, “ನಿಶ್ಚಯವಾಗಿ ಮರಣದ ಕಹಿ ತಪ್ಪಿಹೋಯಿತು,” ಎಂದುಕೊಂಡನು.</verse>
				<verse number="33">ಆದರೆ ಸಮುಯೇಲನು ಅವನಿಗೆ, “ನಿನ್ನ ಖಡ್ಗವು ಹೇಗೆ ಸ್ತ್ರೀಯರನ್ನು ಮಕ್ಕಳಿಲ್ಲದವರಾಗಿ ಮಾಡಿತೋ, ಹಾಗೆಯೇ ಸ್ತ್ರೀಯರಲ್ಲಿ ನಿನ್ನ ತಾಯಿಯು ಮಕ್ಕಳಿಲ್ಲದವಳಾಗುವಳು,” ಎಂದು ಹೇಳಿ, ಸಮುಯೇಲನು ಗಿಲ್ಗಾಲಿನಲ್ಲಿ ಯೆಹೋವ ದೇವರ ಮುಂದೆ ಅಗಾಗನಿಗೆ ಮರಣದಂಡನೆ ವಿಧಿಸಿದನು.</verse>
				<verse number="34">ಸಮುಯೇಲನು ರಾಮಕ್ಕೆ ಹೋದನು; ಆದರೆ ಸೌಲನು ತನ್ನ ಊರಾದ ಗಿಬೆಯದಲ್ಲಿರುವ ತನ್ನ ಮನೆಗೆ ಹೋದನು.</verse>
				<verse number="35">ಸಮುಯೇಲನು ತಾನು ಸಾಯುವ ದಿವಸದವರೆಗೂ ಸೌಲನನ್ನು ತಿರುಗಿ ಕಾಣಲು ಬರಲಿಲ್ಲ. ಸಮುಯೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನಾಗಮಾಡಿದ್ದಕ್ಕೋಸ್ಕರ ಯೆಹೋವ ದೇವರು ದುಃಖಪಟ್ಟರು.</verse>
			</chapter>
			<chapter number="16">
				<verse number="1">ಯೆಹೋವ ದೇವರು ಸಮುಯೇಲನಿಗೆ, “ಇಸ್ರಾಯೇಲಿನ ಅರಸನಾಗಿರದ ಹಾಗೆ ನಾನು ಅಲಕ್ಷ್ಯಮಾಡಿದ ಸೌಲನಿಗೋಸ್ಕರ ನೀನು ಎಷ್ಟರವರೆಗೆ ದುಃಖವುಳ್ಳವನಾಗಿರುವೆ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ. ಬೇತ್ಲೆಹೇಮಿನವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು. ಏಕೆಂದರೆ ಅವನ ಮಕ್ಕಳಲ್ಲಿ ನಾನು ಒಬ್ಬನನ್ನು ಅರಸನಾಗಿ ಆಯ್ದುಕೊಂಡೆನು,” ಎಂದರು.</verse>
				<verse number="2">ಆಗ ಸಮುಯೇಲನು, “ನಾನು ಹೋಗುವುದು ಹೇಗೆ? ಸೌಲನು ಅದನ್ನು ಕೇಳಿದರೆ, ನನ್ನನ್ನು ಕೊಂದುಹಾಕುವನು,” ಎಂದನು. ಅದಕ್ಕೆ ಯೆಹೋವ ದೇವರು, “ನೀನು ಒಂದು ಕಡಸನ್ನು ನಿನ್ನ ಸಂಗಡ ತೆಗೆದುಕೊಂಡುಹೋಗಿ, ‘ನಾನು ಯೆಹೋವ ದೇವರಿಗಾಗಿ ಯಜ್ಞಮಾಡುವುದಕ್ಕೆ ಬಂದೆನು,’ ಎಂದು ಹೇಳಿ,</verse>
				<verse number="3">ಇಷಯನನ್ನು ಯಜ್ಞವನ್ನು ಅರ್ಪಿಸುವುದಕ್ಕೆ ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸುವೆನು. ನಾನು ನಿನಗೆ ಯಾರನ್ನು ತೋರಿಸುತ್ತೇನೋ, ಅವನನ್ನು ನೀನು ನನಗೋಸ್ಕರ ಅಭಿಷೇಕಿಸಬೇಕು,” ಎಂದರು.</verse>
				<verse number="4">ಯೆಹೋವ ದೇವರು ಹೇಳಿದ ಪ್ರಕಾರ ಸಮುಯೇಲನು ಮಾಡಿ, ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ, ಅವನಿಗೆ, “ಸಮಾಧಾನವಾಗಿ ಬಂದೆಯೋ?” ಎಂದರು.</verse>
				<verse number="5">ಅದಕ್ಕವನು, “ಸಮಾಧಾನವೇ, ಯೆಹೋವ ದೇವರಿಗೆ ಬಲಿಯನ್ನು ಅರ್ಪಿಸ ಬಂದೆನು. ನೀವು ನಿಮ್ಮನ್ನು ಪರಿಶುದ್ಧ ಮಾಡಿಕೊಂಡು ನನ್ನ ಸಂಗಡ ಯಜ್ಞಮಾಡುವುದಕ್ಕೆ ಬನ್ನಿರಿ,” ಎಂದನು. ಇಷಯನನ್ನೂ, ಅವನ ಮಕ್ಕಳನ್ನೂ ಶುದ್ಧಮಾಡಿ, ಅವರನ್ನು ಯಜ್ಞಮಾಡುವುದಕ್ಕೆ ಕರೆದನು.</verse>
				<verse number="6">ಅವರು ಬಂದಾಗ, ಅವನು ಎಲೀಯಾಬನನ್ನು ಕಂಡು, “ನಿಶ್ಚಯವಾಗಿ ಯೆಹೋವ ದೇವರ ಅಭಿಷಿಕ್ತನು ಅವರ ಮುಂದೆ ಇದ್ದಾನೆ,” ಎಂದುಕೊಂಡನು.</verse>
				<verse number="7">ಆದರೆ ಯೆಹೋವ ದೇವರು ಸಮುಯೇಲನಿಗೆ, “ನೀನು ಅವನ ರೂಪವನ್ನೂ, ಅವನ ದೇಹದ ಎತ್ತರವನ್ನೂ ದೃಷ್ಟಿಸಬೇಡ. ಏಕೆಂದರೆ ಅವನನ್ನು ನಾನು ತಿರಸ್ಕರಿಸಿದೆನು; ಏಕೆಂದರೆ ಯೆಹೋವ ದೇವರು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ಮಾತ್ರ ನೋಡದೆ, ಹೃದಯವನ್ನೇ ನೋಡುವರು,” ಎಂದನು.</verse>
				<verse number="8">ಆಗ ಇಷಯನು ಅಬೀನಾದಾಬನನ್ನು ಕರೆದು ಅವನನ್ನು ಸಮುಯೇಲನ ಮುಂದೆ ಬರಮಾಡಿದನು. ಆದರೆ ಅವನು ಇವನನ್ನು, “ಯೆಹೋವ ದೇವರು ಆರಿಸಿಕೊಳ್ಳಲಿಲ್ಲ,” ಎಂದನು.</verse>
				<verse number="9">ಇಷಯನು ಶಮ್ಮನನ್ನು ಬರಮಾಡಿದನು; ಆದರೆ ಅವನು, “ಇವನನ್ನು ಯೆಹೋವ ದೇವರು ಆಯ್ದುಕೊಳ್ಳಲಿಲ್ಲ,” ಎಂದನು.</verse>
				<verse number="10">ಅನಂತರ ಇಷಯನು ತನ್ನ ಏಳುಮಂದಿ ಪುತ್ರರನ್ನು ಸಮುಯೇಲನ ಮುಂದೆ ಬರಮಾಡಿದನು. ಆದರೆ ಸಮುಯೇಲನು ಇಷಯನಿಗೆ, “ಯೆಹೋವ ದೇವರು ಇವರಲ್ಲಿ ಒಬ್ಬನನ್ನಾದರೂ ಆಯ್ದುಕೊಳ್ಳಲಿಲ್ಲ,” ಎಂದನು.</verse>
				<verse number="11">ಸಮುಯೇಲನು, “ನಿನಗಿರುವ ಮಕ್ಕಳು ಇಷ್ಟೇನೋ?” ಎಂದು ಇಷಯನನ್ನು ಕೇಳಿದನು. ಅದಕ್ಕವನು, “ಇವರೆಲ್ಲರಿಗಿಂತಲೂ ಚಿಕ್ಕವನೊಬ್ಬನು ಉಳಿದಿದ್ದಾನೆ. ಅವನು ಕುರಿಗಳನ್ನು ಕಾಯುತ್ತಾ ಇದ್ದಾನೆ,” ಎಂದನು. ಆಗ ಸಮುಯೇಲನು ಇಷಯನಿಗೆ, “ಅವನನ್ನು ಕರೆಕಳುಹಿಸು. ಏಕೆಂದರೆ ಅವನು ಇಲ್ಲಿಗೆ ಬರುವವರೆಗೆ ನಾವು ಕುಳಿತುಕೊಳ್ಳಬಾರದು,” ಎಂದನು.</verse>
				<verse number="12">ಆಗ ಇಷಯನು ಅವನನ್ನು ಕರೆಯಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ, ಸುಂದರ ಮುಖವುಳ್ಳವನಾಗಿಯೂ, ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಯೆಹೋವ ದೇವರು ಸಮುಯೇಲನಿಗೆ, “ನೀನೆದ್ದು ಇವನನ್ನು ಅಭಿಷೇಕಿಸು. ಇವನು ಅವನೇ,” ಎಂದರು.</verse>
				<verse number="13">ಸಮುಯೇಲನು ಎಣ್ಣೆ ಇರುವ ಕೊಂಬನ್ನು ತೆಗೆದುಕೊಂಡು, ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಯೆಹೋವ ದೇವರ ಆತ್ಮರು ಕೂಡಲೆ ದಾವೀದನ ಮೇಲೆ ಇಳಿದು ಬಂದರು. ಅನಂತರ ಸಮುಯೇಲನು ಎದ್ದು ರಾಮಕ್ಕೆ ಹೋದನು.</verse>
				<verse number="14">ಯೆಹೋವ ದೇವರ ಆತ್ಮರು ಸೌಲನನ್ನು ಬಿಟ್ಟುಹೋಗಲು, ದೇವರಿಂದ ಬಂದ ದುರಾತ್ಮವು ಅವನನ್ನು ಪೀಡಿಸಿತು.</verse>
				<verse number="15">ಆಗ ಸೌಲನ ಸೇವಕರು ಅವನಿಗೆ, “ಇಗೋ, ದೇವರಿಂದ ಬಂದ ದುರಾತ್ಮವು ನಿನ್ನನ್ನು ಹೆದರಿಸುತ್ತದೆ.</verse>
				<verse number="16">ಕಿನ್ನರಿಯನ್ನು ಬಾರಿಸಲು ನಿಪುಣನಾದ ಒಬ್ಬನನ್ನು ಹುಡುಕುವ ಹಾಗೆ ನಮ್ಮ ಒಡೆಯನಾದ ನೀನು ನಿನ್ನ ಸನ್ನಿಧಿಯಲ್ಲಿರುವ ನಿನ್ನ ಸೇವಕರಿಗೆ ಹೇಳಬೇಕು. ದೇವರಿಂದ ಬಂದ ದುರಾತ್ಮವು ನಿನ್ನ ಮೇಲೆ ಬಂದಿರುವಾಗ, ಅವನು ತನ್ನ ಕೈಯಿಂದ ವಾದ್ಯ ಬಾರಿಸಿದರೆ, ನಿನಗೆ ಒಳ್ಳೆಯದಾಗಿರುವುದು,” ಎಂದರು.</verse>
				<verse number="17">ಸೌಲನು ತನ್ನ ಸೇವಕರಿಗೆ, “ವಾದ್ಯ ಚೆನ್ನಾಗಿ ಬಾರಿಸಬಲ್ಲವನಾದ ಒಬ್ಬನನ್ನು ನನಗೋಸ್ಕರ ನೋಡಿ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದನು.</verse>
				<verse number="18">ಆಗ ಸೇವಕರಲ್ಲಿ ಒಬ್ಬನು ಅವನಿಗೆ ಉತ್ತರವಾಗಿ, “ವಾದ್ಯ ಬಾರಿಸಲು ನಿಪುಣನಾದಂಥ ಬೇತ್ಲೆಹೇಮಿನವನಾದ ಇಷಯನ ಮಗನನ್ನು ಕಂಡೆನು. ಅವನು ಧೈರ್ಯಶಾಲಿಯೂ, ಪರಾಕ್ರಮಶಾಲಿಯೂ, ರಣಶೂರನೂ, ವಾಕ್ಚತುರನೂ, ಸುಂದರನೂ ಆಗಿದ್ದಾನೆ. ಇದಲ್ಲದೆ ಯೆಹೋವ ದೇವರು ಅವನ ಸಂಗಡ ಇದ್ದಾರೆ,” ಎಂದನು.</verse>
				<verse number="19">ಆದಕಾರಣ ಸೌಲನು ಇಷಯನ ಬಳಿಗೆ ದೂತರನ್ನು ಕಳುಹಿಸಿ, “ಕುರಿಗಳ ಬಳಿಯಲ್ಲಿ ಇರುವ ನಿನ್ನ ಪುತ್ರನಾದ ದಾವೀದನನ್ನು ನನ್ನ ಬಳಿಗೆ ಕಳುಹಿಸು,” ಎಂದನು.</verse>
				<verse number="20">ಆಗ ಇಷಯನು ರೊಟ್ಟಿಯನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ, ಒಂದು ಮೇಕೆಯ ಮರಿಯನ್ನೂ ಕತ್ತೆಯ ಮೇಲೆ ಹೇರಿ, ತನ್ನ ಮಗನಾದ ದಾವೀದನ ಮೂಲಕ ಸೌಲನಿಗೆ ಕಳುಹಿಸಿದನು.</verse>
				<verse number="21">ಹಾಗೆಯೇ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಇವನನ್ನು ಬಹಳವಾಗಿ ಮೆಚ್ಚಿದನು. ಅವನನ್ನು ತನ್ನ ಆಯುಧ ಹೊರುವವರಲ್ಲಿ ಒಬ್ಬನನ್ನಾಗಿ ನೇಮಿಸಿಕೊಂಡನು.</verse>
				<verse number="22">ಸೌಲನು ಇಷಯನ ಬಳಿಗೆ ಮನುಷ್ಯನನ್ನು ಕಳುಹಿಸಿ, “ದಾವೀದನು ನನ್ನ ಸಮ್ಮುಖದಲ್ಲಿ ಸೇವೆಮಾಡಲಿ. ಏಕೆಂದರೆ ನಾನು ದಾವೀದನನ್ನು ಮೆಚ್ಚಿದ್ದೇನೆ,” ಎಂದನು.</verse>
				<verse number="23">ಹಾಗೆಯೇ ದೇವರಿಂದ ಬಂದ ದುರಾತ್ಮವು ಸೌಲನ ಮೇಲೆ ಬಂದಾಗ, ದಾವೀದನು ಕಿನ್ನರಿಯನ್ನು ತೆಗೆದುಕೊಂಡು, ತನ್ನ ಕೈಯಿಂದ ಬಾರಿಸುವನು. ಅದರಿಂದ ಸೌಲನು ಉಪಶಮನ ಹೊಂದಿ ಚೆನ್ನಾಗಿರುವನು; ದುರಾತ್ಮವು ಅವನನ್ನು ಬಿಟ್ಟು ಹೋಗುವುದು.</verse>
			</chapter>
			<chapter number="17">
				<verse number="1">ಫಿಲಿಷ್ಟಿಯರು ಯುದ್ಧಮಾಡುವುದಕ್ಕೆ ತಮ್ಮ ಸೈನ್ಯವನ್ನು ಯೆಹೂದ ದೇಶದ ಸೋಕೋವಿನಲ್ಲಿ ಕೂಡಿಸಿದರು. ಅಜೇಕಕ್ಕೂ ಸೋಕೋವಿಗೂ ಮಧ್ಯದಲ್ಲಿರುವ ಎಫೆಸ ದಮ್ಮೀಮಿನಲ್ಲಿ ದಂಡಿಳಿದರು.</verse>
				<verse number="2">ಸೌಲನೂ, ಇಸ್ರಾಯೇಲರೂ ಕೂಡಿಕೊಂಡರು. ಏಲಾ ತಗ್ಗಿನ ಬಳಿಯಲ್ಲಿ ದಂಡಿಳಿದು, ಫಿಲಿಷ್ಟಿಯರಿಗೆ ಎದುರಾಗಿ ಯುದ್ಧಮಾಡಲು ವ್ಯೂಹ ಕಟ್ಟಿದರು.</verse>
				<verse number="3">ಫಿಲಿಷ್ಟಿಯರು ಒಂದು ಕಡೆಯಾಗಿ ಪರ್ವತದ ಬಳಿಯಲ್ಲಿಯೂ, ಇಸ್ರಾಯೇಲರು ಒಂದು ಕಡೆಯಾಗಿ ಪರ್ವತದ ಬಳಿಯಲ್ಲಿಯೂ ನಿಂತರು. ಅವರ ಮಧ್ಯದಲ್ಲಿ ತಗ್ಗು ಇತ್ತು.</verse>
				<verse number="4">ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಹೆಸರುಳ್ಳ ಒಬ್ಬನು ಫಿಲಿಷ್ಟಿಯರ ದಂಡಿನಿಂದ ಹೊರಬಂದನು. ಅವನ ಎತ್ತರ ಸುಮಾರು ಮೂರು ಮೀಟರ್.</verse>
				<verse number="5">ಅವನ ತಲೆಯ ಮೇಲೆ ಕಂಚಿನ ಶಿರಸ್ತ್ರಾಣ ಇತ್ತು. ಪರೆಪರೆಯಾಗಿ ಜೋಡಿಸಲಾಗಿದ್ದ ಕವಚವನ್ನು ಅವನು ತೊಟ್ಟುಕೊಂಡಿದ್ದನು. ಆ ಕವಚವು ಸುಮಾರು ಐವತ್ತೇಳು ಕಿಲೋಗ್ರಾಂ ತೂಕವಾಗಿತ್ತು.</verse>
				<verse number="6">ಅವನ ಕಾಲುಗಳಲ್ಲಿ ಕಂಚಿನ ಚಮ್ಮಳಿಗೆ. ಅವನ ತೋಳುಗಳ ಮಧ್ಯದಲ್ಲಿ ಭರ್ಜಿ ಇದ್ದವು.</verse>
				<verse number="7">ಅವನ ಈಟಿಯ ಕೋಲು ನೇಕಾರರ ಕುಂಟೆಯಷ್ಟು ಗಾತ್ರದಾಗಿತ್ತು. ಅವನ ಈಟಿಯ ಅಲಗು ಏಳು ಕಿಲೋಗ್ರಾಂ ತೂಕವಾಗಿತ್ತು.</verse>
				<verse number="8">ಇದಲ್ಲದೆ ಖೇಡ್ಯ ಹಿಡಿಯುವವನು ಅವನ ಮುಂದೆ ನಡೆದನು. ಅವನು ನಿಂತು ಇಸ್ರಾಯೇಲ್ ಸೈನ್ಯಗಳಿಗೆ ಕೂಗಿ ಹೇಳಿದ್ದೇನೆಂದರೆ, “ಏಕೆ ನೀವು ವ್ಯೂಹ ಕಟ್ಟಿಕೊಳ್ಳ ಹೊರಟಿರಿ? ನಾನು ಫಿಲಿಷ್ಟಿಯನಲ್ಲವೋ? ನೀವು ಸೌಲನ ಸೇವಕರಲ್ಲವೋ? ನೀವು ನಿಮಗೋಸ್ಕರ ಒಬ್ಬನನ್ನು ಆಯ್ದುಕೊಳ್ಳಿರಿ. ಅವನು ನನ್ನ ಮುಂದೆ ಬರಲಿ.</verse>
				<verse number="9">ಅವನು ನನ್ನ ಸಂಗಡ ಯುದ್ಧಮಾಡಿ ನನ್ನನ್ನು ಕೊಂದರೆ, ನಾವು ನಿಮಗೆ ಸೇವಕರಾಗುವೆವು. ಆದರೆ ನಾನು ಅವನನ್ನು ಸೋಲಿಸಿ ಕೊಂದರೆ ನೀವು ನಮಗೆ ಸೇವಕರಾಗಿದ್ದು ನಮ್ಮನ್ನು ಸೇವಿಸಬೇಕು,” ಎಂದನು.</verse>
				<verse number="10">ಆ ಫಿಲಿಷ್ಟಿಯನು, “ನಾನು ಈ ದಿನ ಇಸ್ರಾಯೇಲಿನ ಸೈನ್ಯಗಳನ್ನು ನಿಂದಿಸುತ್ತೇನೆ. ನಾವು ಒಬ್ಬರಿಗೊಬ್ಬರು ಯುದ್ಧಮಾಡುವ ಹಾಗೆ ನನಗೆ ಒಬ್ಬನನ್ನು ಬಿಟ್ಟುಬಿಡಿರಿ,” ಎಂದನು.</verse>
				<verse number="11">ಸೌಲನೂ, ಸಮಸ್ತ ಇಸ್ರಾಯೇಲರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿದಾಗ ಹೆದರಿಕೊಂಡು ಬಹು ಭಯಪಟ್ಟರು.</verse>
				<verse number="12">ದಾವೀದನು ಯೆಹೂದದ ಬೇತ್ಲೆಹೇಮ್ ಊರಿನ ಎಫ್ರಾತ್ಯನಾದ ಇಷಯನೆಂಬವನ ಮಗನಾಗಿದ್ದನು. ಈ ಇಷಯನಿಗೆ ಎಂಟು ಮಂದಿ ಪುತ್ರರಿದ್ದರು. ಸೌಲನ ಕಾಲದಲ್ಲಿ ಇಷಯನು ವೃದ್ಧನಾಗಿದ್ದನು.</verse>
				<verse number="13">ಇಷಯನ ಮೂವರು ಹಿರಿಯ ಪುತ್ರರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು. ಯುದ್ಧಕ್ಕೆ ಹೋದ ಆ ಮೂವರು ಪುತ್ರರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬನು, ಎರಡನೆಯವನ ಹೆಸರು ಅಬೀನಾದಾಬನು; ಮೂರನೆಯವನ ಹೆಸರು ಶಮ್ಮನು;</verse>
				<verse number="14">ಆದರೆ ದಾವೀದನು ಚಿಕ್ಕವನಾಗಿದ್ದನು. ಹಿರಿಯರಾದ ಆ ಮೂವರು ಸೌಲನ ಹಿಂದೆ ಯುದ್ಧಕ್ಕೆ ಹೋಗಿದ್ದರು.</verse>
				<verse number="15">ದಾವೀದನು ಸೌಲನನ್ನು ಬಿಟ್ಟು, ತನ್ನ ತಂದೆಯ ಕುರಿಗಳನ್ನು ಮೇಯಿಸಲು ಬೇತ್ಲೆಹೇಮಿಗೆ ಆಗಾಗ ಹೋಗುತ್ತಿದ್ದನು.</verse>
				<verse number="16">ಆದರೆ ಆ ಫಿಲಿಷ್ಟಿಯನು ಪ್ರತಿ ಉದಯದಲ್ಲಿಯೂ, ಸಾಯಂಕಾಲದಲ್ಲಿಯೂ ಬಂದು ನಾಲ್ವತ್ತು ದಿವಸ ನಿಂತುಕೊಳ್ಳುತ್ತಿದ್ದನು.</verse>
				<verse number="17">ಇಷಯನು ತನ್ನ ಮಗನಾದ ದಾವೀದನಿಗೆ, “ನಿನ್ನ ಸಹೋದರರಿಗೋಸ್ಕರ ಒಂದು ಏಫದ ಹುರಿದ ಧಾನ್ಯವನ್ನೂ, ಈ ಹತ್ತು ರೊಟ್ಟಿಗಳನ್ನೂ ತೆಗೆದುಕೊಂಡು ದಂಡಿನಲ್ಲಿರುವ ನಿನ್ನ ಸಹೋದರರ ಬಳಿಗೆ ಹೋಗು.</verse>
				<verse number="18">ಇದಲ್ಲದೆ ಈ ಹತ್ತು ಗಿಣ್ಣಿನ ಗಡ್ಡೆಗಳನ್ನು ಅವರ ಪ್ರಧಾನನಿಗೆ ಕೊಟ್ಟು, ನಿನ್ನ ಸಹೋದರರ ಕ್ಷೇಮಸಮಾಚಾರವನ್ನು ವಿಚಾರಿಸಿ, ಅವರ ಗುರುತನ್ನು ತೆಗೆದುಕೊಂಡು ಬಾ,” ಎಂದನು.</verse>
				<verse number="19">ಆಗ ಸೌಲನೂ, ಇಸ್ರಾಯೇಲರೆಲ್ಲರೂ ಫಿಲಿಷ್ಟಿಯರ ಸಂಗಡ ಏಲಾ ತಗ್ಗಿನಲ್ಲಿ ಯುದ್ಧ ಮಾಡುತ್ತಿದ್ದರು.</verse>
				<verse number="20">ದಾವೀದನು ಉದಯಕಾಲದಲ್ಲಿ ಎದ್ದು, ಕುರಿ ಕಾಯುವವನ ವಶಕ್ಕೆ ಕುರಿಗಳನ್ನು ಬಿಟ್ಟು, ತನ್ನ ತಂದೆ ಇಷಯನು ತನಗೆ ಆಜ್ಞಾಪಿಸಿದ ಹಾಗೆಯೇ ತೆಗೆದುಕೊಂಡುಹೋಗಿ ಸೈನ್ಯವು ಯುದ್ಧಕ್ಕೆ ಆರ್ಭಟಿಸಿ ಹೊರಡುವಾಗ, ಸಲಕರಣೆಗಳು ಇರುವ ಸ್ಥಳಕ್ಕೆ ಬಂದನು.</verse>
				<verse number="21">ಇಸ್ರಾಯೇಲರೂ, ಫಿಲಿಷ್ಟಿಯರೂ ಸೈನ್ಯಕ್ಕೆದುರಾಗಿ ಸೈನ್ಯ ವ್ಯೂಹ ಕಟ್ಟಿಕೊಂಡಿದ್ದರು.</verse>
				<verse number="22">ಆಗ ದಾವೀದನು ತಾನು ತೆಗೆದುಕೊಂಡು ಬಂದದ್ದನ್ನು, ವಸ್ತುಗಳನ್ನು ಕಾಯುವವನ ಕೈಯಲ್ಲಿ ಇಟ್ಟುಬಿಟ್ಟು, ರಣರಂಗಕ್ಕೆ ಓಡಿಹೋಗಿ, ತನ್ನ ಸಹೋದರರ ಬಳಿಗೆ ಬಂದು, ಯೋಗಕ್ಷೇಮ ವಿಚಾರಿಸಿದನು.</verse>
				<verse number="23">ಅವನು ಇವರ ಸಂಗಡ ಮಾತನಾಡಿಕೊಳ್ಳುತ್ತಾ ಇರುವಾಗ, ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ಫಿಲಿಷ್ಟಿಯರ ಸೈನ್ಯದಿಂದ ಹೊರಟು, ಮೊದಲಿನ ಹಾಗೆಯೇ ಮಾತನಾಡಿದನು. ಆ ಮಾತುಗಳನ್ನು ದಾವೀದನು ಕೇಳಿದನು.</verse>
				<verse number="24">ಇಸ್ರಾಯೇಲರೆಲ್ಲರೂ ಅವನನ್ನು ಕಂಡಾಗ, ಅವನ ಬಳಿಯಿಂದ ಓಡಿಹೋದರು; ಬಹು ಭಯಪಟ್ಟರು.</verse>
				<verse number="25">ಇಸ್ರಾಯೇಲರು, “ಏರಿ ಬಂದ ಈ ಮನುಷ್ಯನನ್ನು ಕಂಡಿರೋ? ಇಸ್ರಾಯೇಲನ್ನು ಪ್ರತಿಭಟಿಸಿ ಏರಿ ಬಂದಿದ್ದಾನಲ್ಲ. ಯಾವನು ಇವನನ್ನು ಕೊಂದು ಬಿಡುವನೋ, ಅವನನ್ನು ಅರಸನು ಬಹಳ ಐಶ್ವರ್ಯವಂತನನ್ನಾಗಿ ಮಾಡಿ, ಅವನಿಗೆ ತನ್ನ ಮಗಳನ್ನು ಕೊಟ್ಟು ಮದುವೆ ಮಾಡಿಸುವನು ಮತ್ತು ಅವನ ತಂದೆಯ ಮನೆಯನ್ನು ಇಸ್ರಾಯೇಲರಲ್ಲಿ ತೆರಿಗೆಯಿಂದ ವಿಮೋಚಿಸುವನು,” ಎಂದರು.</verse>
				<verse number="26">ಆಗ ದಾವೀದನು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರಿಗೆ, “ಈ ಫಿಲಿಷ್ಟಿಯನನ್ನು ಕೊಂದು, ಇಸ್ರಾಯೇಲಿನ ಮೇಲಿಂದ ನಿಂದೆಯನ್ನು ತೆಗೆದುಬಿಡುವ ಆ ಮನುಷ್ಯನಿಗೆ ಏನು ಸಿಕ್ಕುವುದು? ಏಕೆಂದರೆ ಸುನ್ನತಿ ಇಲ್ಲದ ಆ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸುವುದಕ್ಕೆ ಎಷ್ಟರವನು,” ಎಂದನು.</verse>
				<verse number="27">ಜನರು ಆ ಮಾತಿಗೆ ಸರಿಯಾಗಿ, “ಅವನನ್ನು ಕೊಂದವನಿಗೆ ಈ ಪ್ರಕಾರ ಮಾಡಲಾಗುವುದು,” ಎಂದು ಹೇಳಿದರು.</verse>
				<verse number="28">ದಾವೀದನು ಆ ಮನುಷ್ಯರ ಸಂಗಡ ಮಾತನಾಡುತ್ತಿರುವುದನ್ನು ಅವನ ಹಿರಿಯ ಸಹೋದರನಾದ ಎಲೀಯಾಬನು ಕೇಳಿ, ಅವನ ಮೇಲೆ ಕೋಪಗೊಂಡು, “ನೀನು ಇಲ್ಲಿಗೆ ಬಂದದ್ದೇನು? ಅಡವಿಯಲ್ಲಿರುವ ಆ ಸ್ವಲ್ಪ ಕುರಿಗಳನ್ನು ಯಾರ ವಶಕ್ಕೆ ಒಪ್ಪಿಸಿ ಬಂದೆ? ನಿನ್ನ ಗರ್ವವನ್ನೂ, ನಿನ್ನ ಹೃದಯದ ಅಹಂಕಾರವನ್ನೂ ನಾನು ಬಲ್ಲೆನು. ಏಕೆಂದರೆ ಯುದ್ಧವನ್ನು ನೋಡಲು ಇಳಿದು ಬಂದಿದ್ದೀ,” ಎಂದನು.</verse>
				<verse number="29">ಅದಕ್ಕೆ ದಾವೀದನು, “ನಾನು ಈಗ ಮಾಡಿದ್ದೇನು? ಮಾತನಾಡಿದೆನಷ್ಟೇ?” ಎಂದನು.</verse>
				<verse number="30">ಅವನನ್ನು ಬಿಟ್ಟು ಬೇರೊಬ್ಬನ ಕಡೆಗೆ ತಿರುಗಿಕೊಂಡು ಹಾಗೆಯೇ ಕೇಳಿದನು. ಆಗ ಜನರು ಮೊದಲು ಹೇಳಿದ ಹಾಗೆಯೇ ಅವನಿಗೆ ಉತ್ತರವನ್ನು ಹೇಳಿದರು.</verse>
				<verse number="31">ದಾವೀದನು ಹೇಳಿದ ಮಾತುಗಳನ್ನು ಕೇಳಿದವರು ಸೌಲನ ಮುಂದೆ ತಿಳಿಸಿದರು. ಸೌಲನು ದಾವೀದನನ್ನು ಕರೆಯಿಸಿದನು.</verse>
				<verse number="32">ಆಗ ದಾವೀದನು ಸೌಲನಿಗೆ, “ಅವನ ನಿಮಿತ್ತವಾಗಿ ಯಾವ ಹೃದಯವೂ ಕುಗ್ಗಬಾರದು. ನಿನ್ನ ಸೇವಕನು ಹೋಗಿ ಈ ಫಿಲಿಷ್ಟಿಯನ ಸಂಗಡ ಯುದ್ಧಮಾಡುವನು,” ಎಂದನು.</verse>
				<verse number="33">ಆಗ ಸೌಲನು ದಾವೀದನಿಗೆ, “ಈ ಫಿಲಿಷ್ಟಿಯನ ಮೇಲೆ ಯುದ್ಧಮಾಡಲು ನಿನ್ನಿಂದಾಗದು, ಏಕೆಂದರೆ ನೀನು ಹುಡುಗನಾಗಿದ್ದೀಯೆ. ಆದರೆ ಅವನು ಚಿಕ್ಕಂದಿನಿಂದ ಯುದ್ಧದ ಮನುಷ್ಯನಾಗಿದ್ದಾನೆ,” ಎಂದನು.</verse>
				<verse number="34">ದಾವೀದನು ಸೌಲನಿಗೆ, “ನಿನ್ನ ಸೇವಕನು ತನ್ನ ತಂದೆಯ ಕುರಿಗಳನ್ನು ಮೇಯಿಸಿಕೊಂಡಿರುವಾಗ ಸಿಂಹವೂ ಕರಡಿಯೂ ಬಂದು ಮಂದೆಯಲ್ಲಿರುವ ಕುರಿಮರಿಯನ್ನು ಹಿಡಿದವು.</verse>
				<verse number="35">ಆಗ ನಾನು ಅದರ ಹಿಂದೆ ಹೋಗಿ, ಅದನ್ನು ಹೊಡೆದುಬಿಟ್ಟು, ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂದಿರುಗಿ ಬಿದ್ದಾಗ, ನಾನು ಅದರ ಗಡ್ಡವನ್ನು ಹಿಡಿದು, ಹೊಡೆದು ಕೊಂದುಹಾಕಿದೆನು.</verse>
				<verse number="36">ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ, ಆ ಕರಡಿಯನ್ನೂ ಕೊಂದುಬಿಟ್ಟೆನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸಿದ್ದರಿಂದ, ಅವುಗಳಲ್ಲಿ ಒಂದರ ಹಾಗೆ ಇರುವನು,” ಎಂದನು.</verse>
				<verse number="37">ಇದಲ್ಲದೆ ದಾವೀದನು, “ನನ್ನನ್ನು ಸಿಂಹದ ಕೈಗೂ, ಕರಡಿಯ ಕೈಗೂ ತಪ್ಪಿಸಿಬಿಟ್ಟ ಯೆಹೋವ ದೇವರು, ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವರು,” ಎಂದನು. ಆಗ ಸೌಲನು ದಾವೀದನಿಗೆ, “ನೀನು ಹೋಗು, ಯೆಹೋವ ದೇವರು ನಿನ್ನ ಸಂಗಡ ಇರಲಿ,” ಎಂದನು.</verse>
				<verse number="38">ಸೌಲನು ದಾವೀದನಿಗೆ ತನ್ನ ಆಯುಧಗಳನ್ನು ಧರಿಸಲು ಹೇಳಿ, ಅವನ ತಲೆಯ ಮೇಲೆ ಒಂದು ಕಂಚಿನ ಶಿರಸ್ತ್ರಾಣವನ್ನು ಇಟ್ಟು, ಅವನಿಗೆ ಕವಚವನ್ನು ತೊಡಿಸಿದನು.</verse>
				<verse number="39">ದಾವೀದನು ಅವನ ಖಡ್ಗವನ್ನು ತನ್ನ ಕವಚಗಳ ಮೇಲೆ ಕಟ್ಟಿಕೊಂಡು ನಡೆದು ಪರೀಕ್ಷಿಸಿದನು. ಆದರೆ ಅವನಿಗೆ ಅದರ ಅಭ್ಯಾಸವಿರಲಿಲ್ಲ. ಆಗ ದಾವೀದನು ಸೌಲನಿಗೆ, “ನನಗೆ ಅವುಗಳ ಅಭ್ಯಾಸವಿಲ್ಲದ್ದರಿಂದ ಇವುಗಳ ಸಂಗಡ ಹೋಗಲಾರೆನು,” ಎಂದು ಹೇಳಿ, ಅವುಗಳನ್ನು ಬಿಚ್ಚಿಹಾಕಿ</verse>
				<verse number="40">ತನ್ನ ಕೋಲನ್ನು ಕೈಯಲ್ಲಿ ಹಿಡಿದು, ಹಳ್ಳದಲ್ಲಿರುವ ಐದು ನುಣುಪಾದ ಕಲ್ಲುಗಳನ್ನು ಆಯ್ದುಕೊಂಡು, ಅವುಗಳನ್ನು ಕುರಿಕಾಯಲು ಬಳಸುವ ತನ್ನ ಚೀಲದಲ್ಲಿ ಹಾಕಿಕೊಂಡು ಕವಣೆಯನ್ನು ತನ್ನ ಕೈಯಲ್ಲಿ ಹಿಡಿದುಕೊಂಡು, ಆ ಫಿಲಿಷ್ಟಿಯನ ಬಳಿಗೆ ಹೋದನು.</verse>
				<verse number="41">ಫಿಲಿಷ್ಟಿಯನು ನಡೆದು ದಾವೀದನ ಬಳಿಗೆ ಸಮೀಪಿಸಿ ಬಂದನು.</verse>
				<verse number="42">ಅವನ ಖೇಡ್ಯವನ್ನು ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದನನ್ನು ದೃಷ್ಟಿಸಿ ನೋಡಿದಾಗ, ಅವನು ಕೆಂಪಾದವನಾಗಿಯೂ, ಸುಂದರ ರೂಪವುಳ್ಳವನಾಗಿಯೂ ಇರುವ ಹುಡುಗನಾಗಿದ್ದುದರಿಂದ, ಅವನನ್ನು ತಿರಸ್ಕರಿಸಿ ದಾವೀದನಿಗೆ,</verse>
				<verse number="43">“ನೀನು ಕೋಲು ಹಿಡಿದುಕೊಂಡು ನನ್ನ ಬಳಿಗೆ ಬರುವ ಹಾಗೆ ನಾನು ನಾಯಿಯೋ?” ಎಂದು ಹೇಳಿ ಆ ಫಿಲಿಷ್ಟಿಯನು ತನ್ನ ದೇವರುಗಳಿಂದ ದಾವೀದನನ್ನು ಶಪಿಸಿದನು.</verse>
				<verse number="44">ದಾವೀದನಿಗೆ, “ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು,” ಎಂದನು.</verse>
				<verse number="45">ದಾವೀದನು ಫಿಲಿಷ್ಟಿಯನಿಗೆ, “ನೀನು ಖಡ್ಗ, ಈಟಿ ಮತ್ತು ಗುರಾಣಿಗಳೊಡನೆ ನನ್ನ ಬಳಿಗೆ ಬರುತ್ತಿರುವೆ. ಆದರೆ ನಾನು, ನೀನು ನಿಂದಿಸಿದ ಇಸ್ರಾಯೇಲಿನ ಸೈನ್ಯಗಳ ದೇವರಾದ ಸೇನಾಧೀಶ್ವರ ಯೆಹೋವ ದೇವರ ಹೆಸರಿನಲ್ಲಿ ನಿನ್ನ ಬಳಿಗೆ ಬರುತ್ತೇನೆ.</verse>
				<verse number="46">ಯೆಹೋವ ದೇವರು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವರು; ನಾನು ನಿನ್ನನ್ನು ಹೊಡೆದುಬಿಟ್ಟು, ನಿನ್ನ ತಲೆಯನ್ನು ನಿನ್ನಿಂದ ತೆಗೆದುಹಾಕಿ, ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ದಿನ ಇಸ್ರಾಯೇಲರಲ್ಲಿ ದೇವರು ಇದ್ದಾರೆಂದು ಭೂಲೋಕದವರೆಲ್ಲರೂ ತಿಳಿಯುವರು.</verse>
				<verse number="47">ಯೆಹೋವ ದೇವರು ಖಡ್ಗದಿಂದಲೂ, ಈಟಿಯಿಂದಲೂ ರಕ್ಷಿಸುವುದಿಲ್ಲ ಎಂಬುದು ಈ ಸಮೂಹವೆಲ್ಲಾ ತಿಳಿದುಕೊಳ್ಳುವುದು. ಏಕೆಂದರೆ ಯುದ್ಧವು ಯೆಹೋವ ದೇವರದ್ದು, ಅವರು ನಿಮ್ಮನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು.</verse>
				<verse number="48">ಆಗ ಆ ಫಿಲಿಷ್ಟಿಯನು ಎದ್ದು ದಾವೀದನಿಗೆ ಎದುರಾಗಿ ಸಮೀಪಿಸಿ ಬರುವಾಗ,</verse>
				<verse number="49">ದಾವೀದನು ತ್ವರೆಯಾಗಿ ಆ ಫಿಲಿಷ್ಟಿಯನಿಗೆದುರಾಗಿ ಓಡಿಹೋಗಿ, ತನ್ನ ಕೈಯನ್ನು ಚೀಲದಲ್ಲಿ ಹಾಕಿ, ಅದರಲ್ಲಿರುವ ಒಂದು ಕಲ್ಲನ್ನು ತೆಗೆದುಕೊಂಡು, ಕವಣೆಯಲ್ಲಿಟ್ಟು ಬೀಸಿ, ಫಿಲಿಷ್ಟಿಯನ ಹಣೆಯನ್ನು ತಾಕುವಂತೆ ಎಸೆದನು. ಆ ಕಲ್ಲು ಅವನ ಹಣೆಯೊಳಗೆ ಹೊಕ್ಕದ್ದರಿಂದ, ಅವನು ನೆಲದ ಮೇಲೆ ಬೋರಲು ಬಿದ್ದನು.</verse>
				<verse number="50">ಹೀಗೆಯೇ ದಾವೀದನು ಒಂದು ಕವಣೆಯ ಕಲ್ಲಿನಿಂದ ಫಿಲಿಷ್ಟಿಯನನ್ನು ಹೊಡೆದು, ಅವನನ್ನು ಕೊಂದುಹಾಕಿದನು.</verse>
				<verse number="51">ದಾವೀದನ ಕೈಯಲ್ಲಿ ಖಡ್ಗ ಇರಲಿಲ್ಲ. ದಾವೀದನು ಓಡಿಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು, ಅವನ ಖಡ್ಗವನ್ನು ತೆಗೆದುಕೊಂಡು, ಅದನ್ನು ಒರೆಯಿಂದ ಕಿತ್ತು, ಅವನನ್ನು ಕೊಂದು, ಅವನ ತಲೆಯನ್ನು ಕಡಿದುಹಾಕಿದನು. ಫಿಲಿಷ್ಟಿಯರು ತಮ್ಮ ಪರಾಕ್ರಮಶಾಲಿ ಸತ್ತು ಹೋದದ್ದನ್ನು ಕಂಡಾಗ ಓಡಿಹೋದರು.</verse>
				<verse number="52">ಇಸ್ರಾಯೇಲರೂ, ಯೆಹೂದದ ಜನರೂ ಎದ್ದು ಆರ್ಭಟಿಸಿ, ತಗ್ಗಿನ ಮೇರೆಯವರೆಗೂ, ಎಕ್ರೋನಿನ ಬಾಗಿಲಿನವರೆಗೂ ಫಿಲಿಷ್ಟಿಯರನ್ನು ಹಿಂದಟ್ಟಿದರು. ಆದ್ದರಿಂದ ಹತರಾದ ಫಿಲಿಷ್ಟಿಯರು ಶಾರಯಿಮಿನ ಮಾರ್ಗದಲ್ಲಿ ಗತ್ ಎಕ್ರೋನಿನವರೆಗೂ ಬಿದ್ದಿದ್ದರು.</verse>
				<verse number="53">ಇಸ್ರಾಯೇಲರು ಫಿಲಿಷ್ಟಿಯರನ್ನು ಓಡಿಸಿಬಿಟ್ಟ ತರುವಾಯ ತಿರುಗಿಬಂದು ಅವರ ಡೇರೆಗಳನ್ನು ಸೂರೆಮಾಡಿದರು.</verse>
				<verse number="54">ದಾವೀದನು ಫಿಲಿಷ್ಟಿಯನ ತಲೆಯನ್ನು ತೆಗೆದುಕೊಂಡು, ಅದನ್ನು ಯೆರೂಸಲೇಮಿಗೆ ತಂದನು. ಆದರೆ ಅವನ ಆಯುಧಗಳನ್ನು ತನ್ನ ಡೇರೆಯಲ್ಲಿ ಇಟ್ಟನು.</verse>
				<verse number="55">ದಾವೀದನು ಫಿಲಿಷ್ಟಿಯನಿಗೆ ಎದುರಾಗಿ ಹೊರಟು ಹೋಗುವುದನ್ನು ಸೌಲನು ಕಂಡಾಗ, ತನ್ನ ಸೈನ್ಯಾಧಿಪತಿಯಾದ ಅಬ್ನೇರನಿಗೆ, “ಅಬ್ನೇರನೇ, ಈ ಯುವಕನು ಯಾರ ಮಗನು?” ಎಂದನು. ಅದಕ್ಕೆ ಅಬ್ನೇರನು, “ಅರಸನೇ, ನಿನ್ನ ಪ್ರಾಣದಾಣೆ ನಾನರಿಯೆ,” ಎಂದನು.</verse>
				<verse number="56">ಅದಕ್ಕೆ ಅರಸನು, “ಆ ಯೌವನಸ್ಥನು ಯಾರ ಮಗನೆಂದು ವಿಚಾರಿಸು,” ಎಂದನು.</verse>
				<verse number="57">ಆಗ ದಾವೀದನು ಫಿಲಿಷ್ಟಿಯನನ್ನು ಕೊಂದು, ಅವನ ತಲೆಯನ್ನು ತೆಗೆದುಕೊಂಡು ಹಿಂದಿರುಗಿ ಬರುವಾಗ, ಅಬ್ನೇರನು ಅವನನ್ನು ಕರೆದು, ಸೌಲನ ಮುಂದೆ ತಂದು ಬಿಟ್ಟನು.</verse>
				<verse number="58">ಆಗ ಸೌಲನು, “ಯೌವನಸ್ಥನೇ, ನೀನು ಯಾರ ಮಗನು?” ಎಂದು ಅವನನ್ನು ಕೇಳಿದನು. ಅದಕ್ಕೆ ದಾವೀದನು, “ನಾನು ನಿನ್ನ ಸೇವಕನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು,” ಎಂದನು.</verse>
			</chapter>
			<chapter number="18">
				<verse number="1">ದಾವೀದನು ಸೌಲನ ಸಂಗಡ ಮಾತನಾಡಿ ಮುಗಿಸಿದ ಮೇಲೆ, ಯೋನಾತಾನನ ಪ್ರಾಣವು ದಾವೀದನ ಪ್ರಾಣದ ಸಂಗಡ ಒಂದಾಯಿತು. ಯೋನಾತಾನನು ಅವನನ್ನು ತನ್ನ ಪ್ರಾಣದ ಹಾಗೆಯೇ ಪ್ರೀತಿಮಾಡಿದನು.</verse>
				<verse number="2">ಇದಲ್ಲದೆ ಸೌಲನು ಆ ದಿವಸ ಅವನನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡನು. ತಿರುಗಿ ಅವನ ತಂದೆಯ ಮನೆಗೆ ಹೋಗಗೊಡಿಸಲಿಲ್ಲ.</verse>
				<verse number="3">ಯೋನಾತಾನನು ತನ್ನ ಪ್ರಾಣದ ಹಾಗೆ ದಾವೀದನನ್ನು ಪ್ರೀತಿಮಾಡಿದ್ದರಿಂದ, ಒಬ್ಬರಿಗೊಬ್ಬರು ಒಡಂಬಡಿಕೆ ಮಾಡಿಕೊಂಡರು.</verse>
				<verse number="4">ಆಗ ಯೋನಾತಾನನು ತೊಟ್ಟುಕೊಂಡಿದ್ದ ನಿಲುವಂಗಿಯನ್ನು ತೆಗೆದು ಅದನ್ನೂ, ತನ್ನ ವಸ್ತ್ರಗಳನ್ನೂ, ಖಡ್ಗವನ್ನೂ, ಬಿಲ್ಲನ್ನೂ, ನಡುಕಟ್ಟನ್ನೂ ದಾವೀದನಿಗೆ ಕೊಟ್ಟನು.</verse>
				<verse number="5">ಸೌಲನು ದಾವೀದನನ್ನು ಎಲ್ಲಿಗೆ ಕಳುಹಿಸಿದರೂ, ಅಲ್ಲಿಗೆ ಹೋಗಿ ಅವನು ಎಲ್ಲವನ್ನು ವಿವೇಕದಿಂದ ಬಹು ಯಶಸ್ವಿಯಾಗಿ ಮಾಡುತ್ತಿದ್ದನು. ಆದ್ದರಿಂದ ಸೌಲನು ಅವನನ್ನು ಸೈನ್ಯದ ಮೇಲೆ ಅಧಿಕಾರಿಯಾಗಿ ನೇಮಿಸಿದನು. ಇದು ಸಮಸ್ತ ಜನರಿಗೂ, ಸೌಲನ ಸಮಸ್ತ ಸೇವಕರಿಗೂ ಮೆಚ್ಚಿಕೆಯಾಗಿತ್ತು.</verse>
				<verse number="6">ದಾವೀದನು ಫಿಲಿಷ್ಟಿಯರನ್ನು ಹೊಡೆದು ಜನರಸಹಿತವಾಗಿ ಬರುವಾಗ, ಇಸ್ರಾಯೇಲರ ಸಮಸ್ತ ಪಟ್ಟಣಗಳಿಂದ ಸ್ತ್ರೀಯರು ಹೊರಟು ದಮ್ಮಡಿಗಳಿಂದಲೂ ಸಂಗೀತವಾದ್ಯಗಳಿಂದಲೂ ಸಂತೋಷದಿಂದಲೂ ಹಾಡುತ್ತಾ ನಾಟ್ಯವಾಡುತ್ತಾ ಅರಸನಾದ ಸೌಲನನ್ನು ಎದುರುಗೊಳ್ಳಲು ಬಂದರು.</verse>
				<verse number="7">ಆ ಸ್ತ್ರೀಯರು ಒಬ್ಬರಿಗೊಬ್ಬರು, “ಸೌಲನು ಸಾವಿರಗಳಷ್ಟು ಕೊಂದನು, ದಾವೀದನು ಹತ್ತು ಸಾವಿರಗಳಷ್ಟು ಕೊಂದನು,” ಎಂದು ಹಾಡಿದರು.</verse>
				<verse number="8">ಇದರಿಂದ ಸೌಲನಿಗೆ ಬಹು ಕೋಪವಾಯಿತು. ಆ ಹಾಡಿನಿಂದ ಅವನಿಗೆ ಬಹುಬೇಸರವಾಯಿತು. “ಇವರು ದಾವೀದನಿಗೆ ಹತ್ತು ಸಾವಿರಗಳಷ್ಟು ಎಂದು ಹಾಡಿದ್ದಾರೆ; ನನಗೆ ಸಾವಿರಗಳಷ್ಟೇ ಎಂದು ಹಾಡಿದ್ದಾರೆ; ಹಾಗಾದರೆ, ಅವನಿಗೆ ರಾಜ್ಯವಲ್ಲದೆ ಇನ್ನು ಆಗಬೇಕಾದದ್ದೇನು?” ಎಂದುಕೊಂಡನು.</verse>
				<verse number="9">ಆ ದಿವಸ ಮೊದಲುಗೊಂಡು ಸೌಲನು ದಾವೀದನ ಮೇಲೆ ಮತ್ಸರದ ಕಣ್ಣಿಟ್ಟನು.</verse>
				<verse number="10">ಮಾರನೆಯ ದಿವಸದಲ್ಲಿ ದೇವರಿಂದ ಅನುಮತಿಸಿದ ದುರಾತ್ಮವು ಸೌಲನ ಮೇಲೆ ಇಳಿಯಿತು. ಅವನು ಬುದ್ಧಿಗೆಟ್ಟು ಮನೆಯಲ್ಲಿ ಕೂಗಾಡತೊಡಗಿದನು. ಆಗ ದಾವೀದನು ಪ್ರತಿದಿನ ಮಾಡುತ್ತಿದ್ದ ಹಾಗೆಯೇ ತನ್ನ ಕೈಯಿಂದ ಕಿನ್ನರಿಯನ್ನು ಬಾರಿಸುತ್ತಿದ್ದನು. ಆದರೆ ಸೌಲನ ಕೈಯಲ್ಲಿ ಈಟಿಯು ಇತ್ತು.</verse>
				<verse number="11">ಆಗ ಸೌಲನು, “ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯುವೆನು,” ಎಂದು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ಅವನ ಸಮ್ಮುಖದಿಂದ ತಪ್ಪಿಸಿಕೊಂಡನು.</verse>
				<verse number="12">ಸೌಲನು ದಾವೀದನಿಗೆ ಭಯಪಟ್ಟನು. ಏಕೆಂದರೆ ಯೆಹೋವ ದೇವರು ಅವನ ಸಂಗಡ ಇದ್ದರು. ಸೌಲನ ಕಡೆಯಿಂದ ಹೊರಟು ಹೋಗಿದ್ದರು.</verse>
				<verse number="13">ಆದ್ದರಿಂದ ಸೌಲನು ಅವನನ್ನು ತನ್ನ ಬಳಿಯಿಂದ ಹೊರಡಿಸಿಬಿಟ್ಟು, ಸಾವಿರ ಜನರಿಗೆ ಪ್ರಧಾನನ್ನಾಗಿ ಮಾಡಿದನು. ಹಾಗೆಯೇ ಅವನು ದಳಪತಿಯಾಗಿ ಸೈನಿಕರನ್ನು ಕರೆದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇದ್ದನು.</verse>
				<verse number="14">ಯೆಹೋವ ದೇವರು ದಾವೀದನ ಸಂಗಡ ಇದ್ದುದರಿಂದ ಅವನು ತನ್ನ ಸಕಲ ಮಾರ್ಗಗಳಲ್ಲಿ ವಿವೇಕದಿಂದ ವರ್ತಿಸಿ ಜಯಶಾಲಿಯಾಗುತ್ತಿದ್ದನು.</verse>
				<verse number="15">ಅವನು ಜಯಶಾಲಿಯಾಗುತ್ತಿದ್ದದ್ದನ್ನು ಸೌಲನು ಕಂಡು ಅವನಿಗೆ ಭಯಪಟ್ಟಿದ್ದನು.</verse>
				<verse number="16">ಆದರೆ ಇಸ್ರಾಯೇಲ್ ಜನರೂ ಯೆಹೂದ ಜನರೂ ದಾವೀದನು ತಮ್ಮ ಮುಂದೆ ಹೊರಟು ಹೋಗುತ್ತಾ ಬರುತ್ತಾ ಇರುವುದರಿಂದ ಅವನನ್ನು ಪ್ರೀತಿ ಮಾಡಿದರು.</verse>
				<verse number="17">ಆಗ ಸೌಲನು, “ನಾನು ಅವನ ಮೇಲೆ ವಿರೋಧವಾಗಿ ಕೈಯೆತ್ತಬಾರದು. ಫಿಲಿಷ್ಟಿಯರು ಅದನ್ನು ಮಾಡಲಿ,” ಎಂದು ತನ್ನಷ್ಟಕ್ಕೆ ಅಂದುಕೊಂಡು ದಾವೀದನಿಗೆ, “ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಹೆಂಡತಿಯಾಗಿ ಕೊಡುವೆನು, ನೀನು ನನಗೋಸ್ಕರ ಪರಾಕ್ರಮಶಾಲಿಯಾಗಿದ್ದು ಯೆಹೋವ ದೇವರ ಯುದ್ಧಗಳನ್ನು ನಡೆಸು,” ಎಂದನು.</verse>
				<verse number="18">ದಾವೀದನು ಸೌಲನಿಗೆ, “ಅರಸನಿಗೆ ಅಳಿಯನಾಗಿರುವುದಕ್ಕೆ ನಾನೆಷ್ಟರವನು? ನನ್ನ ಕುಟುಂಬ ಎಷ್ಟರದು? ಇಸ್ರಾಯೇಲಿನಲ್ಲಿ ನನ್ನ ತಂದೆಯ ಗೋತ್ರವು ಎಷ್ಟು ಮಾತ್ರವು?” ಎಂದನು.</verse>
				<verse number="19">ಸೌಲನು ತನ್ನ ಮಗಳಾದ ಮೇರಬಳನ್ನು ದಾವೀದನಿಗೆ ಮದುವೆಮಾಡಿಕೊಡುವ ಸಮಯ ಬಂದಾಗ, ಅವಳನ್ನು ಮೆಹೋಲದವನಾದ ಅದ್ರಿಯೇಲ್ ಎಂಬವನಿಗೆ ಕೊಟ್ಟು ಮದುವೆಮಾಡಿದನು.</verse>
				<verse number="20">ಸೌಲನ ಮತ್ತೊಬ್ಬ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸಿದಳು. ಅದು ಸೌಲನಿಗೆ ತಿಳಿದುಬಂದಾಗ, ಆ ಕಾರ್ಯವು ಅವನಿಗೆ ಮೆಚ್ಚಿಕೆಯಾಯಿತು.</verse>
				<verse number="21">“ಅವನಿಗೆ ಉರುಲಾಗಿರುವ ಹಾಗೆಯೂ, ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು,” ಎಂದುಕೊಂಡನು. ಆದ್ದರಿಂದ ಸೌಲನು ದಾವೀದನಿಗೆ, “ನೀನು ನನ್ನ ಅಳಿಯನಾಗಲು ಎರಡನೆಯ ಅವಕಾಶ,” ಎಂದನು.</verse>
				<verse number="22">ಸೌಲನು ತನ್ನ ಸೇವಕರಿಗೆ, “ನೀವು ದಾವೀದನ ಸಂಗಡ ಅಂತರಂಗವಾಗಿ ಮಾತನಾಡಿ, ಇಗೋ, ಅರಸನು ನಿನ್ನ ಮೇಲೆ ಪ್ರೀತಿಯುಳ್ಳವನಾಗಿದ್ದಾನೆ; ಈಗ ನೀನು ಅರಸನಿಗೆ ಅಳಿಯನಾಗೆಂದು, ಹೇಳಿರಿ,” ಎಂದು ಆಜ್ಞಾಪಿಸಿದನು.</verse>
				<verse number="23">ಹಾಗೆಯೇ ಸೌಲನ ಸೇವಕರು ಈ ಮಾತುಗಳನ್ನು ದಾವೀದನ ಕಿವಿಗಳಲ್ಲಿ ಹೇಳಿದರು. ಆದರೆ ದಾವೀದನು, “ನಾನು ದರಿದ್ರನೂ ಅಲ್ಪನೂ ಆಗಿರುವಾಗ, ನಾನು ಅರಸನಿಗೆ ಅಳಿಯನಾಗುವುದು ಅಷ್ಟು ಸಾಧಾರಣ ಸಂಗತಿಯೆಂದು ನೆನಸುತ್ತೀರೋ?” ಎಂದನು.</verse>
				<verse number="24">ಆಗ ಸೌಲನ ಸೇವಕರು ಸೌಲನಿಗೆ, ದಾವೀದನು ಈ ಪ್ರಕಾರವಾಗಿ ಮಾತನಾಡಿದನೆಂದು ಹೇಳಿದರು.</verse>
				<verse number="25">ಆದರೆ ಸೌಲನು ದಾವೀದನನ್ನು ಫಿಲಿಷ್ಟಿಯರ ಕೈಯಿಂದ ಬೀಳಮಾಡಬೇಕೆಂದು ನೆನಸಿ ತನ್ನ ಸೇವಕರಿಗೆ, “ನೀವು ದಾವೀದನಿಗೆ ಅರಸನು ಯಾವ ತೆರವನ್ನು ಅಪೇಕ್ಷಿಸದೆ, ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಹಾಗೆ ನೂರು ಮಂದಿ ಫಿಲಿಷ್ಟಿಯರ ಮುಂದೊಗಲನ್ನು ಅಪೇಕ್ಷಿಸುತ್ತಾನೆಂದು ಹೇಳಿರಿ,” ಎಂದನು.</verse>
				<verse number="26">ಹಾಗೆಯೇ ಅವನ ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ, ಅರಸನಿಗೆ ಅಳಿಯನಾಗುವುದು ಅವನಿಗೆ ಚೆನ್ನಾಗಿ ಕಾಣಿಸಿತು.</verse>
				<verse number="27">ಆದ್ದರಿಂದ ನೇಮಿಸಿದ ದಿವಸಗಳು ಈಡೇರುವುದಕ್ಕಿಂತ ಮುಂಚೆ ದಾವೀದನು ಎದ್ದು, ತನ್ನ ಜನರನ್ನು ಕರಕೊಂಡು ಹೋಗಿ, ಫಿಲಿಷ್ಟಿಯರಲ್ಲಿ ಇನ್ನೂರು ಜನರನ್ನು ಹೊಡೆದು, ಅವರ ಮುಂದೊಗಲುಗಳನ್ನು ತಂದು, ತಾನು ಅರಸನಿಗೆ ಅಳಿಯನಾಗುವ ಹಾಗೆ ಅವುಗಳನ್ನು ಅರಸನಿಗೆ ಒಪ್ಪಿಸಿದನು. ಆಗ ಸೌಲನು ತನ್ನ ಪುತ್ರಿಯಾದ ಮೀಕಲಳನ್ನು ಅವನಿಗೆ ಮದುವೆಮಾಡಿಕೊಟ್ಟನು.</verse>
				<verse number="28">ಸೌಲನು, ಯೆಹೋವ ದೇವರು ದಾವೀದನ ಸಂಗಡ ಇದ್ದಾರೆಂದೂ, ತನ್ನ ಮಗಳಾದ ಮೀಕಲಳು ಅವನನ್ನು ಪ್ರೀತಿ ಮಾಡಿದ್ದಳೆಂದು ತಿಳಿದುಕೊಂಡನು.</verse>
				<verse number="29">ಸೌಲನು ದಾವೀದನಿಗೋಸ್ಕರ ಇನ್ನೂ ಹೆಚ್ಚಾಗಿ ಭಯಪಟ್ಟನು. ಸೌಲನು ದಾವೀದನಿಗೆ ಜೀವಮಾನವೆಲ್ಲಾ ಶತ್ರುವಾಗಿದ್ದನು.</verse>
				<verse number="30">ಫಿಲಿಷ್ಟಿಯರ ಪ್ರಧಾನರು ಯುದ್ಧಕ್ಕೆ ಬರುತ್ತಿದ್ದರು. ಅವರು ಹೊರಟು ಬಂದಾಗಲೆಲ್ಲಾ ದಾವೀದನು ಸೌಲನ ಸಮಸ್ತ ಸೇನಾಪತಿಗಳಿಗಿಂತ ಅತ್ಯಧಿಕ ಜಯಶೀಲನಾಗಿ ಹಿಂದಿರುಗುತ್ತಿದ್ದನು. ಆದ್ದರಿಂದ ಅವನ ಹೆಸರು ಬಹು ಪ್ರಸಿದ್ಧವಾಯಿತು.</verse>
			</chapter>
			<chapter number="19">
				<verse number="1">ಸೌಲನು ತನ್ನ ಮಗ ಯೋನಾತಾನ ಮತ್ತು ತನ್ನ ಸಮಸ್ತ ಸೇವಕರಿಗೆ ದಾವೀದನನ್ನು ಕೊಲ್ಲಬೇಕೆಂದು ಹೇಳಿದನು. ಆದರೆ ಸೌಲನ ಮಗನಾದ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.</verse>
				<verse number="2">ಯೋನಾತಾನನು ದಾವೀದನನ್ನು, “ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದು ಹುಡುಕುತ್ತಾನೆ. ನೀನು ನಾಳೆ ಬೆಳಗಿನವರೆಗೆ ಎಚ್ಚರಿಕೆಯಾಗಿದ್ದು, ಮರೆಯಾದ ಸ್ಥಳಗಳಲ್ಲಿ ಅಡಗಿಕೋ.</verse>
				<verse number="3">ಆಗ ನನ್ನ ತಂದೆಯ ಬಳಿಯಲ್ಲಿ ನಿಂತುಕೊಂಡು, ನಿನಗೋಸ್ಕರ ನನ್ನ ತಂದೆಯ ಸಂಗಡ ಮಾತನಾಡಿ, ನಾನು ನೋಡುವುದನ್ನು ಹೊರಟುಬಂದು ನೀನು ಇರುವ ಹೊಲದಲ್ಲಿ ನಿನಗೆ ತಿಳಿಸುವೆನು,” ಎಂದನು.</verse>
				<verse number="4">ಹಾಗೆಯೇ ಯೋನಾತಾನನು ತನ್ನ ತಂದೆ ಸೌಲನ ಸಂಗಡ ದಾವೀದನನ್ನು ಕುರಿತು ಒಳ್ಳೆಯದನ್ನು ಮಾತನಾಡಿ ಅವನಿಗೆ, “ಅರಸನು ತನ್ನ ಸೇವಕನಾದ ದಾವೀದನಿಗೆ ದ್ರೋಹಮಾಡದೆ ಇರಲಿ. ಏಕೆಂದರೆ ಅವನು ನಿನಗೆ ದ್ರೋಹಮಾಡಲಿಲ್ಲ. ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ.</verse>
				<verse number="5">ಅವನು ತನ್ನ ಪ್ರಾಣವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಫಿಲಿಷ್ಟಿಯನನ್ನು ಹೊಡೆದನು. ಯೆಹೋವ ದೇವರು ಸಮಸ್ತ ಇಸ್ರಾಯೇಲರಿಗೋಸ್ಕರ ದೊಡ್ಡ ರಕ್ಷಣೆಯನ್ನು ಉಂಟುಮಾಡಿದರು. ನೀನೂ ಕಂಡು ಸಂತೋಷಪಟ್ಟೆ. ಈಗ ಕಾರಣವಿಲ್ಲದೆ ದಾವೀದನನ್ನು ಕೊಂದು ನಿರ್ದೋಷಿಯ ರಕ್ತಕ್ಕೆ ವಿರೋಧವಾಗಿ ಅಪರಾಧವನ್ನು ಮಾಡುವುದೇಕೆ?” ಎಂದನು.</verse>
				<verse number="6">ಆಗ ಸೌಲನು ಯೋನಾತಾನನ ಮಾತನ್ನು ಕೇಳಿ, “ಯೆಹೋವ ದೇವರಾಣೆ ಅವನು ಕೊಲೆಯಾಗುವುದಿಲ್ಲ,” ಎಂದನು.</verse>
				<verse number="7">ಆಗ ಯೋನಾತಾನನು ದಾವೀದನನ್ನು ಕರೆದು, ಆ ಮಾತುಗಳನ್ನೆಲ್ಲಾ ಅವನಿಗೆ ತಿಳಿಸಿ, ದಾವೀದನನ್ನು ಸೌಲನ ಬಳಿಗೆ ಕರೆತಂದನು. ಅವನು ಮುಂಚಿನ ಹಾಗೆಯೇ ಸೌಲನ ಬಳಿಯಲ್ಲಿ ಇದ್ದನು.</verse>
				<verse number="8">ತಿರುಗಿ ಯುದ್ಧ ಉಂಟಾಯಿತು. ಆಗ ದಾವೀದನು ಹೊರಟು, ಫಿಲಿಷ್ಟಿಯರ ಸಂಗಡ ಯುದ್ಧಮಾಡಿ ಅವರನ್ನು ಸಾಹಸದಿಂದ ಹೊಡೆದನು. ಅವರು ಅವನ ಎದುರಿನಿಂದ ಓಡಿಹೋದರು.</verse>
				<verse number="9">ಸೌಲನು ತನ್ನ ಕೈಯಲ್ಲಿ ಈಟಿಯನ್ನು ಹಿಡಿದು, ತನ್ನ ಮನೆಯೊಳಗೆ ಕುಳಿತಿರುವಾಗ, ಯೆಹೋವ ದೇವರಿಂದ ಕಳುಹಿಸಲಾದ ದುರಾತ್ಮವು ಅವನ ಮೇಲೆ ಬಂತು. ದಾವೀದನು ತನ್ನ ಕೈಯಿಂದ ಕಿನ್ನರಿ ಬಾರಿಸಿದನು.</verse>
				<verse number="10">ಆಗ ಸೌಲನು ದಾವೀದನನ್ನು ಈಟಿಯಿಂದ ಗೋಡೆಗೆ ಹತ್ತಿಕೊಳ್ಳುವ ಹಾಗೆ ಹೊಡೆಯಬೇಕೆಂದು ಹುಡುಕಿದನು. ಆದರೆ ದಾವೀದನು ಸೌಲನ ಎದುರಿನಿಂದ ತಪ್ಪಿಸಿಕೊಂಡನು. ಅವನ ಈಟಿಯು ಗೋಡೆಯಲ್ಲಿ ಹತ್ತಿಕೊಳ್ಳುವಂತೆ ಹೊಡೆದನು. ದಾವೀದನು ಓಡಿಹೋಗಿ ಆ ರಾತ್ರಿಯಲ್ಲಿ ತಪ್ಪಿಸಿಕೊಂಡನು.</verse>
				<verse number="11">ಆದರೆ ದಾವೀದನನ್ನು ಕಾದುಕೊಂಡಿದ್ದು, ಉದಯದಲ್ಲಿ ಅವನನ್ನು ಕೊಂದುಹಾಕುವ ಹಾಗೆ ಸೌಲನು ಅವನ ಮನೆಗೆ ದೂತರನ್ನು ಕಳುಹಿಸಿದನು. ಆಗ ಅವನ ಹೆಂಡತಿಯಾದ ಮೀಕಲಳು ಅವನಿಗೆ, “ನೀನು ಈ ರಾತ್ರಿಯಲ್ಲಿ ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳದೆ ಹೋದರೆ, ನಾಳೆ ಹತನಾಗುವಿ,” ಎಂದು ಹೇಳಿ</verse>
				<verse number="12">ದಾವೀದನನ್ನು ಕಿಟಿಕಿಯ ಮಾರ್ಗವಾಗಿ ಇಳಿಸಿಬಿಡಲು ಅವನು ತಪ್ಪಿಸಿಕೊಂಡು ಓಡಿಹೋದನು.</verse>
				<verse number="13">ತರುವಾಯ ಮೀಕಲಳು ಒಂದು ವಿಗ್ರಹವನ್ನು ತೆಗೆದುಕೊಂಡು, ಮಂಚದ ಮೇಲೆ ಮಲಗಿಸಿ, ಅದರ ತಲೆ ಭಾಗದಲ್ಲಿ ಒಂದು ಹೋತದ ಉಣ್ಣೆಯ ತಲೆದಿಂಬನ್ನು ಹಾಕಿ, ಅದನ್ನು ವಸ್ತ್ರದಿಂದ ಮುಚ್ಚಿದಳು.</verse>
				<verse number="14">ಸೌಲನು ದಾವೀದನನ್ನು ಹಿಡಿದುಕೊಂಡು ಬರಲು ದೂತರನ್ನು ಕಳುಹಿಸಿದಾಗ, ಮೀಕಲಳು ಅವರಿಗೆ, “ಅವನು ಖಾಯಿಲೆಯಲ್ಲಿದ್ದಾನೆ,” ಎಂದಳು.</verse>
				<verse number="15">ತಿರುಗಿ ಸೌಲನು ದಾವೀದನನ್ನು ನೋಡುವುದಕ್ಕೋಸ್ಕರ ದೂತರನ್ನು ಕಳುಹಿಸಿ, “ಅವನನ್ನು ನಾನು ಕೊಂದುಹಾಕುವ ಹಾಗೆ ನೀವು ಮಂಚದ ಸಂಗಡ ಅವನನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ,” ಎಂದನು.</verse>
				<verse number="16">ಹಾಗೆಯೇ ಸೇವಕರು ಬಂದು ಕಂಡಾಗ, ವಿಗ್ರಹವು ಮಂಚದ ಮೇಲೆ ಇತ್ತು. ಅದರ ತಲೆಗೆ ಒಂದು ಆಡಿನ ಉಣ್ಣೆಯ ತಲೆದಿಂಬು ಇತ್ತು.</verse>
				<verse number="17">ಆಗ ಸೌಲನು ಮೀಕಲಳಿಗೆ, “ನೀನು ಈ ಪ್ರಕಾರ ನನಗೆ ಮೋಸಮಾಡಿ, ನನ್ನ ಶತ್ರುವನ್ನು ಕಳುಹಿಸಿದ್ದೇನು? ಅವನು ತಪ್ಪಿಸಿಕೊಂಡನಲ್ಲಾ,” ಎಂದನು. ಆಗ ಮೀಕಲಳು ಸೌಲನಿಗೆ ಉತ್ತರವಾಗಿ, “ಅವನು ನನಗೆ, ‘ನಾನು ನಿನ್ನನ್ನು ಕೊಂದು ಹಾಕುವುದು ಏಕೆ? ನನ್ನನ್ನು ಹೋಗಗೊಡಿಸು,’ ಎಂದು ಹೇಳಿದನು,” ಎಂದಳು.</verse>
				<verse number="18">ಹೀಗೆಯೇ ದಾವೀದನು ಓಡಿಹೋಗಿ ತಪ್ಪಿಸಿಕೊಂಡು ರಾಮದಲ್ಲಿರುವ ಸಮುಯೇಲನ ಬಳಿಗೆ ಬಂದು, ಸೌಲನು ತನಗೆ ಮಾಡಿದ್ದನ್ನೆಲ್ಲಾ ಅವನಿಗೆ ತಿಳಿಸಿದನು. ಅವನೂ ಸಮುಯೇಲನೂ ಹೋಗಿ ನಯೋತಿನಲ್ಲಿ ವಾಸವಾಗಿದ್ದರು.</verse>
				<verse number="19">ಆಗ, “ದಾವೀದನು ರಾಮದ ನಯೋತಿನಲ್ಲಿ ಇದ್ದಾನೆ,” ಎಂದು ಸೌಲನಿಗೆ ಗೊತ್ತಾಯಿತು.</verse>
				<verse number="20">ಆದ್ದರಿಂದ ಸೌಲನು ದಾವೀದನನ್ನು ಹಿಡಿದುಕೊಂಡು ಬರಲು ದೂತರನ್ನು ಕಳುಹಿಸಿದನು. ಪ್ರವಾದಿಗಳ ಗುಂಪು ಪ್ರವಾದಿಸುವುದನ್ನೂ ಅವರ ಮೇಲೆ ಯಜಮಾನನಾಗಿರುವ ಸಮುಯೇಲನು ನಿಂತಿರುವುದನ್ನೂ ಕಂಡಾಗ, ದೇವರ ಆತ್ಮ ಸೌಲನ ದೂತರ ಮೇಲೆ ಬಂದಿತು, ಅವರೂ ಸಹ ಪ್ರವಾದಿಸಿದರು.</verse>
				<verse number="21">ಸೌಲನಿಗೆ ಈ ವರ್ತಮಾನವು ಮುಟ್ಟಿದಾಗ, ಅವನು ಬೇರೆ ದೂತರನ್ನು ಕಳುಹಿಸಿದನು. ಅವರೂ ಹಾಗೆಯೇ ಪ್ರವಾದಿಸಿದರು. ಮೂರನೆಯ ಸಾರಿ ಸೌಲನು ದೂತರನ್ನು ಕಳುಹಿಸಿದನು. ಅವರೂ ಹಾಗೆಯೇ ಪ್ರವಾದಿಸಿದರು.</verse>
				<verse number="22">ಆಗ ಸೌಲನು ತಾನೇ ರಾಮಕ್ಕೆ ಹೋದನು. ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದು, ಸಮುಯೇಲನೂ ದಾವೀದನೂ ಎಲ್ಲಿದ್ದಾರೆ ಎಂದು ಕೇಳಿದನು. ಆಗ ಒಬ್ಬನು, “ಅವರು ರಾಮದ ನಯೋತಿನಲ್ಲಿದ್ದಾರೆ,” ಎಂದನು.</verse>
				<verse number="23">ಹಾಗೆಯೇ ಅವನು ರಾಮದ ನಯೋತಿಗೆ ಹೋದನು. ಆಗ ದೇವರ ಆತ್ಮ ಮೇಲೆ ಬರಲು, ಅವನು ರಾಮದ ನಯೋತಿಗೆ ಸೇರುವವರೆಗೂ ಪ್ರವಾದಿಸುತ್ತಾ ಬಂದನು.</verse>
				<verse number="24">ಅಲ್ಲಿ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿ, ತಾನೂ ಹಾಗೆಯೇ ಸಮುಯೇಲನ ಮುಂದೆ ಪ್ರವಾದಿಸಿದನು. ಆ ದಿನ ಹಗಲೆಲ್ಲವೂ, ರಾತ್ರಿಯೆಲ್ಲವೂ ಬೆತ್ತಲೆಯಾಗಿ ಬಿದ್ದಿದ್ದನು. ಆದ್ದರಿಂದ, “ಸೌಲನು ಕೂಡ ಪ್ರವಾದಿಗಳಲ್ಲಿ ಒಬ್ಬನಾಗಿದ್ದಾನೆಯೇ?” ಎಂಬ ಮಾತು ಪ್ರಚಲಿತವಾಯಿತು.</verse>
			</chapter>
			<chapter number="20">
				<verse number="1">ದಾವೀದನು ರಾಮದ ನಯೋತಿನಿಂದ ಓಡಿಹೋಗಿ ಯೋನಾತಾನನ ಬಳಿಗೆ ಬಂದು, ಅವನ ಮುಂದೆ, “ನಾನು ಏನು ಮಾಡಿದೆನು? ನನ್ನ ಅಕ್ರಮವೇನು? ನಿನ್ನ ತಂದೆಯು ನನ್ನ ಪ್ರಾಣವನ್ನು ಹುಡುಕುವ ಹಾಗೆ ನಾನು ಅವನಿಗೆ ಮಾಡಿದ ದ್ರೋಹವೇನು?” ಎಂದನು.</verse>
				<verse number="2">ಯೋನಾತಾನನು ಅವನಿಗೆ, “ಅದು ಆಗಬಾರದು. ನೀನು ಸಾಯುವುದಿಲ್ಲ; ನನ್ನ ತಂದೆಯು ನನಗೆ ತಿಳಿಸದೆ ಯಾವ ಚಿಕ್ಕ ಕಾರ್ಯವನ್ನಾದರೂ, ದೊಡ್ಡ ಕಾರ್ಯವನ್ನಾದರೂ ಮಾಡುವುದಿಲ್ಲ. ಈ ಕಾರ್ಯವನ್ನು ಯಾತಕ್ಕೆ ನನ್ನ ತಂದೆಯು ನನಗೆ ಬಚ್ಚಿಟ್ಟನು? ಹಾಗೆ ಆಗದು,” ಎಂದನು.</verse>
				<verse number="3">ದಾವೀದನು ಪ್ರಮಾಣಮಾಡಿ, “ನಿನ್ನ ಕಣ್ಣು ಮುಂದೆ ನನಗೆ ದಯೆ ದೊರಕಿತೆಂದು ನಿನ್ನ ತಂದೆಯು ನಿಶ್ಚಲವಾಗಿ ಬಲ್ಲನು. ಆದಕಾರಣ ಅವನು ಯೋನಾತಾನನು ವ್ಯಥೆಪಡದ ಹಾಗೆ, ‘ಅವನು ಇದನ್ನು ತಿಳಿಯಬಾರದು,’ ಎಂದು ಹೇಳುತ್ತಾನೆ. ನಿಶ್ಚಯವಾಗಿ ಯೆಹೋವ ದೇವರಾಣೆ, ನನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ಮಾತ್ರ ದೂರ ಇದೆ,” ಎಂದನು.</verse>
				<verse number="4">ಆಗ ಯೋನಾತಾನನು ದಾವೀದನಿಗೆ, “ನಿನ್ನ ಪ್ರಾಣವು ಏನೇನು ಹೇಳುತ್ತದೋ, ನಿನಗೋಸ್ಕರ ನಾನು ಅದನ್ನು ಮಾಡುವೆನು,” ಎಂದನು.</verse>
				<verse number="5">ದಾವೀದನು ಯೋನಾತಾನನಿಗೆ, “ನಾಳೆ ಅಮಾವಾಸ್ಯೆ, ಆದ್ದರಿಂದ ನಾನು ಅರಸನ ಸಂಗಡ ಪಂಕ್ತಿಯಲ್ಲಿ ಊಟ ಮಾಡಲೇ ಬೇಕಾಗಿರುವುದು. ನಾನು ಮೂರನೆಯ ದಿವಸದ ಸಾಯಂಕಾಲದವರೆಗೆ ಹೊಲದಲ್ಲಿ ಬಚ್ಚಿಟ್ಟುಕೊಂಡಿರಲು, ನನ್ನನ್ನು ಹೋಗಗೊಡಿಸು.</verse>
				<verse number="6">ನಿನ್ನ ತಂದೆಯು ನಾನು ಅಲ್ಲಿ ಇಲ್ಲದಿರುವುದನ್ನು ಕಂಡು, ಶ್ರದ್ಧೆಯಿಂದ ವಿಚಾರಿಸಿ ಅವನು ಎಲ್ಲಿ? ಎಂದು ಕೇಳಿದರೆ, ‘ದಾವೀದನು ತನ್ನ ಊರಾದ ಬೇತ್ಲೆಹೇಮಿಗೆ ಹೋಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಏಕೆಂದರೆ ತನ್ನ ಸಮಸ್ತ ಕುಟುಂಬಕ್ಕೋಸ್ಕರ ವರುಷದ ಯಜ್ಞ ಮಾಡುತ್ತಾರೆ,’ ಎಂದು ಹೇಳು.</verse>
				<verse number="7">ಅದಕ್ಕೆ ಅವನು, ‘ಒಳ್ಳೆಯದು,’ ಎಂದು ಹೇಳಿದರೆ, ನಿನ್ನ ಸೇವಕನಿಗೆ ಸಮಾಧಾನವಾಗಿರುವುದು. ಅವನು ಬಹಳ ಕೋಪ ಮಾಡಿದರೆ, ಅವನಿಂದ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ.</verse>
				<verse number="8">ಆದ್ದರಿಂದ ನೀನು ನಿನ್ನ ಸೇವಕನ ಮೇಲೆ ದಯೆ ತೋರಿಸಬೇಕು. ಏಕೆಂದರೆ ಯೆಹೋವ ದೇವರ ಒಡಂಬಡಿಕೆಯನ್ನು ನಿನ್ನ ಸೇವಕನೊಂದಿಗೆ ಮಾಡಿಕೊಂಡಿದ್ದೀಯಲ್ಲಾ. ಆದರೂ ನನ್ನಲ್ಲಿ ಅಕ್ರಮವಿದ್ದರೆ, ನೀನೇ ನನ್ನನ್ನು ಕೊಂದುಹಾಕು. ನನ್ನನ್ನು ನಿನ್ನ ತಂದೆಯ ಬಳಿಗೆ ಕರೆದುಕೊಂಡು ಹೋಗುವುದು ಏಕೆ?” ಎಂದನು.</verse>
				<verse number="9">ಆಗ ಯೋನಾತಾನನು, “ಅದು ನಿನಗೆ ದೂರವಾಗಿರಲಿ. ಏಕೆಂದರೆ ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ, ನಾನು ಅದನ್ನು ನಿನಗೆ ತಿಳಿಸದೆ ಇರುವೆನೋ?” ಎಂದನು.</verse>
				<verse number="10">ದಾವೀದನು ಯೋನಾತಾನನಿಗೆ, “ನಿನ್ನ ತಂದೆಯು ನಿನಗೆ ಕಠಿಣವಾದ ಉತ್ತರ ಹೇಳಿದರೆ, ಅದನ್ನು ನನಗೆ ತಿಳಿಸುವವರು ಯಾರು?” ಎಂದನು.</verse>
				<verse number="11">ಆಗ ಯೋನಾತಾನನು ದಾವೀದನಿಗೆ, “ನಾವು ಹೊಲಕ್ಕೆ ಹೋಗೋಣ ಬಾ,” ಎಂದನು. ಹಾಗೆಯೇ ಅವರಿಬ್ಬರೂ ಹೊಲಕ್ಕೆ ಹೊರಟು ಹೋದರು.</verse>
				<verse number="12">ಯೋನಾತಾನನು ದಾವೀದನಿಗೆ, “ಇಸ್ರಾಯೇಲರ ದೇವರಾದ ಯೆಹೋವ ದೇವರೇ, ನಾನು ನಾಳೆ ನಾಡಿದ್ದರೊಳಗೆ ನನ್ನ ತಂದೆಯನ್ನು ವಿಚಾರಿಸಲು, ದಾವೀದನ ಮೇಲೆ ದಯೆ ಇದ್ದರೆ ನಿನಗೆ ತಿಳಿಸುವ ಹಾಗೆ ಹೇಳಿಕಳುಹಿಸದೆ ಇದ್ದರೆ, ಯೆಹೋವ ದೇವರು ಯೋನಾತಾನನಿಗೆ ಅದಕ್ಕಿಂತ ಅಧಿಕವಾಗಿ ಮಾಡಲಿ.</verse>
				<verse number="13">ಆದರೆ ನಿನಗೆ ಕೇಡು ಮಾಡಲು ನನ್ನ ತಂದೆಗೆ ಮನಸ್ಸಾಗಿದ್ದರೆ, ಅದನ್ನು ನಿನಗೆ ತಿಳಿಸಿ ನೀನು ಸಮಾಧಾನದಿಂದ ಹೋಗುವಹಾಗೆ ನಿನ್ನನ್ನು ಕಳುಹಿಸುವೆನು. ಯೆಹೋವ ದೇವರು ನನ್ನ ತಂದೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರಲಿ.</verse>
				<verse number="14">ಆದರೆ ನಾನು ಇನ್ನೂ ಬದುಕುತ್ತಿರುವಾಗ ನಾನು ಸಾಯದ ಹಾಗೆ ನೀನು ಯೆಹೋವ ದೇವರ ದಯೆಯನ್ನು ನನ್ನ ಮೇಲೆ ತೋರಿಸಿಬೇಕಾದದ್ದಲ್ಲದೆ,</verse>
				<verse number="15">ಯೆಹೋವ ದೇವರು ದಾವೀದನ ಶತ್ರುಗಳಲ್ಲಿ ಒಬ್ಬನೂ ಇಲ್ಲದ ಹಾಗೆ ಭೂಮಿಯಿಂದ ತೆಗೆದುಬಿಟ್ಟಾಗ, ಎಂದಿಗೂ ನಿನ್ನ ದಯೆಯನ್ನು ನನ್ನ ಮನೆಯಿಂದ ತೆಗೆದುಹಾಕಬಾರದು,” ಎಂದನು.</verse>
				<verse number="16">ಹೀಗೆಯೇ ಯೋನಾತಾನನು ದಾವೀದನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು, “ಅಗಲಿದರೆ ಯೆಹೋವ ದೇವರೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ,” ಎಂದನು.</verse>
				<verse number="17">ಯೋನಾತಾನನು ದಾವೀದನನ್ನು ಪ್ರೀತಿಮಾಡಿದ್ದರಿಂದ, ಅವನಿಂದ ತಿರುಗಿ ಪ್ರಮಾಣ ತೆಗೆದುಕೊಂಡನು. ಅವನು ತನ್ನ ಪ್ರಾಣವನ್ನು ಪ್ರೀತಿಮಾಡಿದ ಹಾಗೆಯೇ, ಅವನನ್ನು ಪ್ರೀತಿಮಾಡಿದನು.</verse>
				<verse number="18">ಯೋನಾತಾನನು ದಾವೀದನಿಗೆ, “ನಾಳೆ ಅಮಾವಾಸ್ಯೆ; ನೀನು ಅಲ್ಲಿ ಇಲ್ಲದಿರುವುದರಿಂದ ನಿನ್ನ ಸ್ಥಳವು ಬರಿದಾಗಿರುವುದು.</verse>
				<verse number="19">ನೀನು ಮೂರು ದಿವಸ ತಡೆದ ತರುವಾಯ, ಕೆಲಸವು ನಡೆಯುತ್ತಿರುವಾಗ ನೀನು ಬಚ್ಚಿಟ್ಟುಕೊಂಡಿದ್ದ ಸ್ಥಳಕ್ಕೆ ತ್ವರೆಯಾಗಿ ತಿರುಗಿಬಂದು, ಏಜಲ್ ಎಂಬ ಕಲ್ಲಿನ ಬಳಿಯಲ್ಲಿ ಕುಳಿತಿರು.</verse>
				<verse number="20">ಆಗ ನಾನು ಗುರಿಯಿಟ್ಟವನ ಹಾಗೆ ಅದರ ಕಡೆಗೆ ಮೂರು ಬಾಣಗಳನ್ನು ಎಸೆಯುವೆನು.</verse>
				<verse number="21">ಅನಂತರ ಹುಡುಗನನ್ನು ಕಳುಹಿಸಿ, ‘ಆ ಬಾಣಗಳನ್ನು ಹುಡುಕಿಕೊಂಡು ಬಾ,’ ಎಂದು ಹೇಳುವೆನು. ‘ಆ ಬಾಣಗಳು ನಿನಗೆ ಈಚೆ ಬಿದ್ದಿವೆ, ಅವುಗಳನ್ನು ತೆಗೆದುಕೊಂಡು ಬಾ,’ ಎಂದು ನಾನು ಹುಡುಗನಿಗೆ ಹೇಳಿದರೆ, ನೀನು ಬರಬಹುದು. ಏಕೆಂದರೆ ಯೆಹೋವ ದೇವರಾಣೆ, ನಿನಗೆ ಕೇಡಿಲ್ಲದೆ ಸಮಾಧಾನವಿರುವುದು.</verse>
				<verse number="22">ಆದರೆ, ‘ಇಗೋ, ಬಾಣಗಳು ನಿನ್ನ ಆಚೆ ಬಿದ್ದಿವೆ,’ ಎಂದು ಹುಡುಗನಿಗೆ ಹೇಳಿದರೆ, ಹೊರಟು ಹೋಗು. ಏಕೆಂದರೆ ಯೆಹೋವ ದೇವರು ನಿನ್ನನ್ನು ದೂರ ಕಳುಹಿಸಿದರು.</verse>
				<verse number="23">ನಾನೂ, ನೀನೂ ಮಾತನಾಡಿಕೊಂಡ ಈ ಕಾರ್ಯಕ್ಕೆ ಯೆಹೋವ ದೇವರು ನನಗೂ, ನಿನಗೂ ಮಧ್ಯೆ ಎಂದೆಂದಿಗೂ ಸಾಕ್ಷಿಯಾಗಿರುವರು,” ಎಂದು ಹೇಳಿದನು.</verse>
				<verse number="24">ಹಾಗೆಯೇ ದಾವೀದನು ಹೊಲದಲ್ಲಿ ಬಚ್ಚಿಟ್ಟುಕೊಂಡಿದ್ದನು. ಅಮಾವಾಸ್ಯೆಯಾದಾಗ ಅರಸನು ಭೋಜನವನ್ನು ಮಾಡಲು ಕುಳಿತನು.</verse>
				<verse number="25">ಅರಸನು ಎಂದಿನಂತೆ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಕುಳಿತಾಗ, ಯೋನಾತಾನನು ಎದ್ದನು ಆದರೆ ಅಬ್ನೇರನು ಸೌಲನ ಬಳಿಯಲ್ಲಿ ಕುಳಿತನು. ದಾವೀದನು ಇರುವ ಸ್ಥಳವು ಬರಿದಾಗಿತ್ತು.</verse>
				<verse number="26">ಆದರೂ ಸೌಲನು ಆ ದಿವಸದಲ್ಲಿ ಅವನನ್ನು ಕುರಿತು ಏನೂ ಹೇಳದೆ, “ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಅಶುಚಿಯಾಗಿರಬಹುದು; ನಿಶ್ಚಯವಾಗಿ ಅಶುಚಿಯಾಗಿದ್ದಾನೆ,” ಎಂದು ಹೇಳಿಕೊಂಡನು.</verse>
				<verse number="27">ಅಮಾವಾಸ್ಯೆಯ ಮಾರನೆಯ ದಿವಸದಲ್ಲಿ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿ ದಾವೀದನು ಕೂಡುವ ಸ್ಥಳವು ಹಾಗೆಯೇ ಬರಿದಾಗಿತ್ತು. ಆದ್ದರಿಂದ ಸೌಲನು, “ಇಷಯನ ಮಗನು ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಏಕೆ ಬರಲಿಲ್ಲ?” ಎಂದು ತನ್ನ ಪುತ್ರನಾದ ಯೋನಾತಾನನನ್ನು ಕೇಳಿದನು.</verse>
				<verse number="28">ಯೋನಾತಾನನು ಸೌಲನಿಗೆ ಉತ್ತರವಾಗಿ, “ಬೇತ್ಲೆಹೇಮಿನವರೆಗೂ ಹೋಗಿ ಬರಲು ದಾವೀದನು ನನ್ನನ್ನು ಬಹಳವಾಗಿ ಬೇಡಿಕೊಂಡನು.</verse>
				<verse number="29">ಅವನು ನನಗೆ, ‘ದಯಮಾಡಿ ನನಗೆ ಅಪ್ಪಣೆಕೊಡು. ಏಕೆಂದರೆ ಊರೊಳಗೆ ನಮ್ಮ ಕುಟುಂಬಕ್ಕೆ ಯಜ್ಞ ಮಾಡುವುದಿದೆ. ನನ್ನ ಸಹೋದರರು ನನ್ನನ್ನು ಬರಲು ಹೇಳಿ ಕಳುಹಿಸಿದರು. ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ, ನಾನು ಅಪ್ಪಣೆ ತೆಗೆದುಕೊಂಡು ನನ್ನ ಸಹೋದರರನ್ನು ಕಾಣುವುದಕ್ಕೆ ಹೋಗುತ್ತೇನೆ,’ ಎಂದನು. ಆದ್ದರಿಂದ ಅವನು ಅರಸನ ಮೇಜಿಗೆ ಬರಲಿಲ್ಲ,” ಎಂದನು.</verse>
				<verse number="30">ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ, “ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ, ಇಷಯನ ಮಗನನ್ನು ನೀನು ಆರಿಸಿಕೊಂಡಿದ್ದೀ ಎಂದು ನಾನರಿಯೆನೋ? ಇದರಿಂದ ನಿನಗೂ ನಿನ್ನನ್ನು ಹೆತ್ತವಳಿಗೂ ಅಸಹ್ಯವಾಗುವುದು.</verse>
				<verse number="31">ಏಕೆಂದರೆ ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳವರೆಗೂ ನೀನಾದರೂ, ನಿನ್ನ ರಾಜ್ಯವಾದರೂ ಸ್ಥಿರವಾಗುವುದಿಲ್ಲ. ಆದ್ದರಿಂದ ಈಗ ನೀನು ಅವನನ್ನು ಕರೆಕಳುಹಿಸಿ, ನನ್ನ ಬಳಿಗೆ ತೆಗೆದುಕೊಂಡು ಬಾ. ಏಕೆಂದರೆ ಅವನು ನಿಜವಾಗಿ ಸಾಯಲೇಬೇಕು,” ಎಂದನು.</verse>
				<verse number="32">ಅದಕ್ಕೆ ಯೋನಾತಾನನು ತನ್ನ ತಂದೆ ಸೌಲನಿಗೆ ಉತ್ತರವಾಗಿ, “ಅವನನ್ನು ಏಕೆ ಕೊಲೆಮಾಡಬೇಕು? ಅವನು ಏನು ಮಾಡಿದನು?” ಎಂದನು.</verse>
				<verse number="33">ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದ್ದರಿಂದ ಯೋನಾತಾನನು ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದನೆಂದು ತಿಳಿದುಕೊಂಡನು.</verse>
				<verse number="34">ಯೋನಾತಾನನು ಕೋಪದಿಂದ ಉರಿಗೊಂಡು ಮೇಜಿನಿಂದ ಎದ್ದು ಹೋದನು. ಹಬ್ಬದ ಎರಡನೆಯ ದಿನವಾಗಿದ್ದ ಅಂದು ಅವನು ಊಟ ಮಾಡಲಿಲ್ಲ. ಏಕೆಂದರೆ ತನ್ನ ತಂದೆಯು ದಾವೀದನಿಗೆ ಅವಮಾನ ಮಾಡಿದ್ದರಿಂದ, ಅವನಿಗೋಸ್ಕರ ವ್ಯಥೆಪಟ್ಟನು.</verse>
				<verse number="35">ಉದಯದಲ್ಲಿ ಯೋನಾತಾನನು ದಾವೀದನಿಗೆ ನೇಮಿಸಿದ ವೇಳೆಯ ಪ್ರಕಾರವೇ ಒಬ್ಬ ಚಿಕ್ಕ ಹುಡುಗನನ್ನು ಕರೆದುಕೊಂಡು,</verse>
				<verse number="36">ಹೊಲಕ್ಕೆ ಹೊರಟುಹೋಗಿ ಹುಡುಗನಿಗೆ, “ನೀನು ಓಡಿಹೋಗಿ ನಾನು ಎಸೆಯುವ ಬಾಣಗಳನ್ನು ಹುಡುಕಿಕೊಂಡು ಬಾ,” ಎಂದು ಹೇಳಿ, ಆ ಹುಡುಗನು ಓಡುವಾಗ ಅವನಿಗೆ, ಆಚೆ ಹೋಗುವಹಾಗೆ ಬಾಣವನ್ನು ಎಸೆದನು.</verse>
				<verse number="37">ಯೋನಾತಾನನು ಎಸೆದ ಬಾಣವಿರುವ ಸ್ಥಳದವರೆಗೆ ಹುಡುಗನು ಹೋದಾಗ, “ಬಾಣವು ನಿನ್ನ ಆಚೆ ಇಲ್ಲವೋ?” ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿದನು.</verse>
				<verse number="38">“ನೀನು ಆಲಸ್ಯಮಾಡದೇ ತ್ವರೆಯಾಗಿ ಹೋಗು,” ಎಂದು ಯೋನಾತಾನನು ಹುಡುಗನ ಹಿಂದೆ ಕೂಗಿ ಹೇಳಿದನು. ಹಾಗೆಯೇ ಯೋನಾತಾನನ ಹುಡುಗನು ಬಾಣಗಳನ್ನು ಕೂಡಿಸಿಕೊಂಡು, ತನ್ನ ಯಜಮಾನನ ಬಳಿಗೆ ತಂದನು.</verse>
				<verse number="39">ಆ ಹುಡುಗನು ಏನೂ ತಿಳಿಯದೆ ಇದ್ದನು. ಯೋನಾತಾನನೂ, ದಾವೀದನೂ ಮಾತ್ರ ಆ ಸಂಗತಿಯನ್ನು ತಿಳಿದುಕೊಂಡಿದ್ದರು.</verse>
				<verse number="40">ಆಗ ಯೋನಾತಾನನು ತನ್ನ ಆಯುಧಗಳನ್ನು ತನ್ನ ಹುಡುಗನಿಗೆ ಕೊಟ್ಟು ಅವನಿಗೆ, “ಅವುಗಳನ್ನು ಪಟ್ಟಣದೊಳಕ್ಕೆ ತೆಗೆದುಕೊಂಡು ಹೋಗು,” ಎಂದನು.</verse>
				<verse number="41">ಹುಡುಗನು ಹೋಗುತ್ತಲೇ ದಾವೀದನು ದಕ್ಷಿಣ ಕಡೆಯಿಂದ ಎದ್ದು ಬಂದು ಯೋನಾತಾನನ ಮುಂದೆ ಬೋರಲು ಬಿದ್ದು ಮೂರು ಸಾರಿ ವಂದಿಸಿದನು. ಅವರು ಒಬ್ಬರಿಗೊಬ್ಬರು ಮುದ್ದಿಟ್ಟುಕೊಂಡು, ಒಬ್ಬರನ್ನೊಬ್ಬರು ನೋಡಿ ಅತ್ತರು. ದಾವೀದನು ಬಹಳವಾಗಿ ಅತ್ತನು.</verse>
				<verse number="42">ಆಗ ಯೋನಾತಾನನು ದಾವೀದನಿಗೆ, “ನೀನು ಸಮಾಧಾನವಾಗಿ ಹೋಗು, ಯೆಹೋವ ದೇವರು ಎಂದೆಂದಿಗೂ ನನಗೂ, ನಿನಗೂ, ನನ್ನ ಸಂತಾನಕ್ಕೂ, ನಿನ್ನ ಸಂತಾನಕ್ಕೂ ಸಾಕ್ಷಿಯಾಗಿರಲೆಂದು ಮಧ್ಯದಲ್ಲಿ ಯೆಹೋವ ದೇವರ ಹೆಸರಿನಿಂದ ಆಣೆಯಿಟ್ಟು ನಾವಿಬ್ಬರೂ ಪ್ರಮಾಣ ಮಾಡಿಕೊಂಡೆವಲ್ಲಾ,” ಎಂದನು. ಆಗ ದಾವೀದನು ಎದ್ದು ಹೋದನು. ಯೋನಾತಾನನು ಪಟ್ಟಣಕ್ಕೆ ಹೋದನು.</verse>
			</chapter>
			<chapter number="21">
				<verse number="1">ದಾವೀದನು ನೋಬಿನಲ್ಲಿರುವ ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಎದುರುಗೊಳ್ಳಬಂದಾಗ ಹೆದರಿ, “ಒಬ್ಬರೂ ನಿನ್ನ ಸಂಗಡ ಬಾರದೆ, ನೀನು ಒಂಟಿಯಾಗಿ ಬಂದದ್ದೇನು?” ಎಂದು ಅವನನ್ನು ಕೇಳಿದನು.</verse>
				<verse number="2">ದಾವೀದನು ಯಾಜಕನಾದ ಅಹೀಮೆಲೆಕನಿಗೆ, “ಅರಸನು ನನಗೆ ಒಂದು ಕಾರ್ಯವನ್ನು ಆಜ್ಞಾಪಿಸಿದ್ದು, ಇಂಥದ್ದೆಂದು ಒಬ್ಬರಿಗೂ ತಿಳಿಯಬಾರದೆಂದು ನನಗೆ ಹೇಳಿದನು. ಇಂಥಿಂಥ ಸ್ಥಳಗಳಿಗೆ ಹೋಗಬೇಕೆಂದು ನಾನು ನನ್ನ ಕೆಲಸದವರಿಗೆ ನೇಮಿಸಿದ್ದೇನೆ.</verse>
				<verse number="3">ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ಐದು ರೊಟ್ಟಿಗಳನ್ನಾದರೂ, ನಿನಗೆ ದೊರಕಿದ ಯಾವುದನ್ನಾದರೂ ನನಗೆ ಕೊಡು,” ಎಂದನು.</verse>
				<verse number="4">ಯಾಜಕನು ದಾವೀದನಿಗೆ ಉತ್ತರವಾಗಿ, “ಪರಿಶುದ್ಧವಾಗಿಸಿದ ರೊಟ್ಟಿಯ ಹೊರತಾಗಿ, ನನ್ನ ಕೈಯಲ್ಲಿ ಸಾಧಾರಣವಾದ ಒಂದು ರೊಟ್ಟಿಯಾದರೂ ಇಲ್ಲ. ಆ ರೊಟ್ಟಿಗಳನ್ನು ಸ್ತ್ರೀಯರೊಂದಿಗೆ ಸಂಪರ್ಕ ಮಾಡದವರಿಗೆ ಕೊಡಬಹುದು,” ಎಂದನು.</verse>
				<verse number="5">ದಾವೀದನು ಯಾಜಕನಿಗೆ ಉತ್ತರವಾಗಿ, “ನಾನು ಹೊರಡುವುದಕ್ಕಿಂತ ಮುಂಚೆ ನಿನ್ನೆಯೂ, ಮೊನ್ನೆಯೂ ಸ್ತ್ರೀಯರು ನಮಗೆ ದೂರವಾಗಿದ್ದರು. ಅಪವಿತ್ರವಾದ ಕಾರ್ಯಗಳಿಗೆ ಹೋಗುವಾಗಲೂ ಪುರುಷರು ಶುದ್ಧರಾಗಿರುತ್ತಾರೆ. ಇಂದು ಅದಕ್ಕಿಂತಲೂ ಹೆಚ್ಚಾಗಿರುವರಲ್ಲವೇ?” ಎಂದನು.</verse>
				<verse number="6">ಆಗ ಯೆಹೋವ ದೇವರ ಸನ್ನಿಧಿಯಿಂದ ತೆಗೆಯಲಾದ ಸಮ್ಮುಖದ ರೊಟ್ಟಿಗಳ ಹೊರತು, ಬೇರೆ ರೊಟ್ಟಿ ಅಲ್ಲಿ ಇಲ್ಲದ್ದರಿಂದ ಯಾಜಕನು ಅವನಿಗೆ ಪರಿಶುದ್ಧವಾಗಿಸಿದ ರೊಟ್ಟಿಯನ್ನು ಕೊಟ್ಟನು. ಏಕೆಂದರೆ ಅವುಗಳನ್ನು ತೆಗೆದುಕೊಳ್ಳುವ ದಿನದಲ್ಲಿ ಅವುಗಳಿಗೆ ಬದಲಾಗಿ ಬಿಸಿ ರೊಟ್ಟಿಗಳನ್ನು ಇಡಲೇಬೇಕು.</verse>
				<verse number="7">ಸೌಲನ ಸೇವಕರಲ್ಲಿ ಎದೋಮ್ಯನಾದ ದೋಯೇಗನೆಂಬ ಹೆಸರುಳ್ಳ ಒಬ್ಬನು ಆ ದಿವಸ ಅಲ್ಲಿ ಯೆಹೋವ ದೇವರ ಆಲಯದ ಮುಂದೆ ಉಳಿದುಕೊಂಡಿದ್ದನು. ಅವನು ಸೌಲನ ಹಿಂಡು ಕಾಯುವವರಲ್ಲಿ ಮುಖ್ಯಸ್ಥನಾಗಿದ್ದನು.</verse>
				<verse number="8">ಆಗ ದಾವೀದನು ಅಹೀಮೆಲೆಕನಿಗೆ, “ಇಲ್ಲಿ ನಿನ್ನ ಕೈ ವಶದಲ್ಲಿ ಈಟಿಯಾದರೂ, ಖಡ್ಗವಾದರೂ ಇಲ್ಲವೋ? ಏಕೆಂದರೆ ಅರಸನ ಕಾರ್ಯವು ಅವಸರವಾದುದರಿಂದ ನಾನು ನನ್ನ ಖಡ್ಗವನ್ನಾದರೂ, ಆಯುಧಗಳನ್ನಾದರೂ ತೆಗೆದುಕೊಂಡು ಬರಲಿಲ್ಲ,” ಎಂದನು.</verse>
				<verse number="9">ಅದಕ್ಕೆ ಯಾಜಕನು, “ನೀನು ಏಲಾ ತಗ್ಗಿನಲ್ಲಿ ಸಂಹರಿಸಿದ ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವನ್ನು ಏಫೋದಿನ ಹಿಂದೆ ಒಂದು ಬಟ್ಟೆಯಲ್ಲಿ ಸುತ್ತಿ ಇಟ್ಟಿದೆ. ಅದನ್ನು ನೀನು ತೆಗೆದುಕೋ. ಏಕೆಂದರೆ ಅದು ಒಂದೇ ಅಲ್ಲದೆ ಇಲ್ಲಿ ಬೇರೊಂದು ಇಲ್ಲ,” ಎಂದನು. ಅದಕ್ಕೆ ದಾವೀದನು, “ಅದರಂಥದ್ದು ಮತ್ತೊಂದಿಲ್ಲ, ಅದನ್ನೇ ಕೊಡು,” ಎಂದನು.</verse>
				<verse number="10">ದಾವೀದನು ಎದ್ದು ಆ ದಿನ ಸೌಲನ ಭಯದಿಂದ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು.</verse>
				<verse number="11">ಆಕೀಷನ ಸೇವಕರು ಅವನಿಗೆ, “ಇವನು ನಾಡಿನ ಅರಸನಾದ ದಾವೀದನಲ್ಲವೋ? “ ‘ಸೌಲನು ಸಾವಿರಗಳನ್ನೂ, ದಾವೀದನು ಹತ್ತು ಸಾವಿರಗಳನ್ನೂ ಸಂಹರಿಸಿದನು,’ ಎಂದು ಸ್ತ್ರೀಯರು ನೃತ್ಯದಲ್ಲಿ ಒಬ್ಬರಿಗೊಬ್ಬರು ಹಾಡಿದ್ದು ಇವನನ್ನು ಕುರಿತಲ್ಲವೋ?”</verse>
				<verse number="12">ಆಗ ದಾವೀದನು ಈ ಮಾತುಗಳನ್ನು ತನ್ನ ಹೃದಯದಲ್ಲಿ ಇಟ್ಟುಕೊಂಡು ಗತ್ ಊರಿನ ಅರಸನಾದ ಆಕೀಷನಿಗೆ ಹೆದರಿ,</verse>
				<verse number="13">ಅವರ ಕಣ್ಣು ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿ, ಅವರಿಗೆ ತನ್ನನ್ನು ಹುಚ್ಚನ ಹಾಗೆಯೇ ತೋರಮಾಡಿ, ದ್ವಾರದ ಕದಗಳನ್ನು ಕೆರೆಯುತ್ತಾ, ತನ್ನ ಬಾಯಿಯ ಜೊಲ್ಲನ್ನು ತನ್ನ ಗಡ್ಡದ ಮೇಲೆ ಸುರಿಸಿಕೊಂಡನು.</verse>
				<verse number="14">ಆಗ ಆಕೀಷನು ತನ್ನ ಸೇವಕರಿಗೆ, “ಈ ಮನುಷ್ಯನು ನೋಡಿರಿ! ಅವನು ಹುಚ್ಚನಾಗಿದ್ದಾನೆ. ಇವನನ್ನು ನನ್ನ ಬಳಿಗೆ ಏಕೆ ತೆಗೆದುಕೊಂಡು ಬಂದಿರಿ?</verse>
				<verse number="15">ಹುಚ್ಚರು ನನಗೆ ಅವಶ್ಯವೆಂದು ನೆನಸಿ ನನ್ನನ್ನು ಮರುಳುಮಾಡಿ ಬೇಸರಗೊಳಿಸುವುದಕ್ಕಾಗಿ ಇವನನ್ನು ನನ್ನ ಮುಂದೆ ತೆಗೆದುಕೊಂಡು ಬಂದಿರೋ? ಇವನು ನನ್ನ ಮನೆಯಲ್ಲಿ ಬರಬೇಕೋ?” ಎಂದನು.</verse>
			</chapter>
			<chapter number="22">
				<verse number="1">ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಬಂದನು. ಆ ವರ್ತಮಾನವನ್ನು ಅವನ ಸಹೋದರರೂ, ಅವನ ತಂದೆಯ ಮನೆಯವರೆಲ್ಲರೂ ಕೇಳಿ, ಅವನ ಬಳಿಗೆ ಅಲ್ಲಿಗೆ ಬಂದರು.</verse>
				<verse number="2">ಇದಲ್ಲದೆ ಶ್ರಮಪಟ್ಟವರೂ, ಸಾಲಗಾರರೂ, ಅಸಂತುಷ್ಟರೂ ಅವನ ಸಂಗಡ ಕೂಡಿಕೊಂಡರು. ಆಗ ದಾವೀದನು ಅವರಿಗೆ ಅಧಿಪತಿಯಾದನು. ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.</verse>
				<verse number="3">ದಾವೀದನು ಅಲ್ಲಿಂದ ಹೊರಟು ಮೋವಾಬ್ ದೇಶದ ಮಿಚ್ಪೆಗೆ ಬಂದು ಮೋವಾಬಿನ ಅರಸನಿಗೆ, “ದೇವರು ನನಗೆ ಏನು ಮಾಡುವರೋ ಎಂದು ನಾನು ತಿಳಿಯುವವರೆಗೂ, ನನ್ನ ತಂದೆತಾಯಿಗಳು ಹೊರಟುಬಂದು ನಿನ್ನ ಬಳಿಯಲ್ಲಿ ವಾಸಿಸಿರಲಿ,” ಎಂದು ಹೇಳಿ, ಅವರನ್ನು ಮೋವಾಬಿನ ಅರಸನ ಬಳಿಗೆ ಕರೆತಂದು ಬಿಟ್ಟನು.</verse>
				<verse number="4">ದಾವೀದನು ಗವಿಯಲ್ಲಿ ಇದ್ದ ದಿವಸಗಳೆಲ್ಲಾ, ಅವರು ಆ ಅರಸನ ಬಳಿಯಲ್ಲಿ ವಾಸವಾಗಿದ್ದರು.</verse>
				<verse number="5">ಆದರೆ ಗಾದನೆಂಬ ಪ್ರವಾದಿಯು ದಾವೀದನಿಗೆ, “ನೀನು ಗವಿಯಲ್ಲಿರದೆ ಯೆಹೂದ ದೇಶಕ್ಕೆ ಹೊರಟು ಬಾ,” ಎಂದನು. ಆಗ ದಾವೀದನು ಹೊರಟು ಹೆರೆತ್ ಎಂಬ ಅರಣ್ಯಕ್ಕೆ ಬಂದನು.</verse>
				<verse number="6">ಒಂದು ದಿನ ದಾವೀದನೂ ಅವನ ಸಂಗಡ ಇದ್ದವರೂ ಅಡಗಿಕೊಂಡಿದ್ದಾರೆ ಎಂಬ ವರ್ತಮಾನವನ್ನು ಸೌಲನು ಕೇಳಿದನು. ಆಗ ಅವನು ಗಿಬೆಯದ ಗುಡ್ಡದಲ್ಲಿ ಒಂದು ಪಿಚುಲ ವೃಕ್ಷದ ಕೆಳಗೆ ತನ್ನ ಈಟಿಯನ್ನು ಕೈಯಲ್ಲಿ ಹಿಡಿದು ಕುಳಿತುಕೊಂಡನು. ಅವನ ಸೇವಕರೆಲ್ಲರು ಸುತ್ತಲೂ ನಿಂತಿದ್ದರು.</verse>
				<verse number="7">ಆಗ ಸೌಲನು ಸುತ್ತಲು ನಿಂತಿದ್ದ ಸೇವಕರಿಗೆ, “ಬೆನ್ಯಾಮೀನನ ಮಕ್ಕಳೇ, ಕೇಳಿರಿ. ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡೆಸುವಂತೆ ಇಷಯನ ಮಗನು ನಿಮ್ಮೆಲ್ಲರಿಗೆ ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನು ಸಾವಿರಕ್ಕೆ ನಾಯಕರಾಗಿಯೂ, ನೂರಕ್ಕೆ ನಾಯಕರಾಗಿಯೂ ಮಾಡುವನೋ?</verse>
				<verse number="8">ಇದಲ್ಲದೆ ನಿಮ್ಮಲ್ಲಿ ನನ್ನ ಮಗನು ಇಷಯನ ಮಗನ ಸಂಗಡ ಒಡಂಬಡಿಕೆ ಮಾಡಿಕೊಂಡಿದ್ದನ್ನು ನನಗೆ ಯಾವನೂ ತಿಳಿಸಲಿಲ್ಲ. ನಿಮ್ಮಲ್ಲಿ ಯಾವನಾದರೂ ನನಗೋಸ್ಕರ ಚಿಂತಿಸಿ, ನನ್ನ ಮಗನು ಈ ಹೊತ್ತು ನನ್ನ ನಿಮಿತ್ತ ಅಡಗಿಕೊಂಡಿರುವಂತೆ ನನ್ನ ಸೇವಕನನ್ನು ನನಗೆ ವಿರೋಧವಾಗಿ ಒಳಸಂಚುಮಾಡಿ ಎಬ್ಬಿಸಿದ್ದನ್ನು ಯಾವನೂ ನನಗೆ ತಿಳಿಸಲಿಲ್ಲ,” ಎಂದನು.</verse>
				<verse number="9">ಆಗ ಸೌಲನು ಸೇವಕರಿಗೆ ಯಜಮಾನನಾಗಿದ್ದ ಎದೋಮ್ಯನಾದ ದೋಯೇಗನು ಉತ್ತರವಾಗಿ, “ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ಕಂಡೆನು.</verse>
				<verse number="10">ಇವನು ಅವನಿಗೋಸ್ಕರ ಯೆಹೋವ ದೇವರನ್ನು ಕೇಳಿ ಅವನಿಗೆ ಆಹಾರವನ್ನು ಕೊಟ್ಟು, ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವನ್ನು ಅವನಿಗೆ ಕೊಟ್ಟನು,” ಎಂದನು.</verse>
				<verse number="11">ಆದ್ದರಿಂದ ಅರಸನು ಅಹೀಟೂಬನ ಮಗನಾದ ಯಾಜಕನಾಗಿರುವ ಅಹೀಮೆಲೆಕನನ್ನೂ, ನೋಬದಲ್ಲಿರುವ ಯಾಜಕರಾಗಿರುವ ಅವನ ತಂದೆಯ ಮನೆಯವರಾದ ಸಮಸ್ತರನ್ನೂ ಕರೆಯಿಸಿದನು. ಅವರೆಲ್ಲರೂ ಅರಸನ ಬಳಿಗೆ ಬಂದರು.</verse>
				<verse number="12">ಆಗ ಸೌಲನು, “ಅಹೀಟೂಬನ ಮಗನೇ, ಕೇಳು,” ಎಂದನು. ಅದಕ್ಕವನು, “ನನ್ನ ಒಡೆಯನೇ, ನಾನು ಇಲ್ಲಿದ್ದೇನೆ,” ಎಂದನು.</verse>
				<verse number="13">ಸೌಲನು ಅವನಿಗೆ, “ನೀನೂ, ಇಷಯನ ಮಗನೂ ನನಗೆ ವಿರೋಧವಾಗಿ ಒಳಸಂಚು ಮಾಡಿದ್ದೇನು? ಅವನು ಅಡಗಿಕೊಂಡು ನನಗೆ ವಿರೋಧವಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿಯನ್ನೂ, ಖಡ್ಗವನ್ನೂ ಕೊಟ್ಟು ದೇವರನ್ನು ಅವನಿಗೋಸ್ಕರ ವಿಚಾರಿಸಿದ್ದೇನು? ಅವನು ಇಂದಿನವರೆಗೂ ನನ್ನನ್ನು ಕೊಲ್ಲುವುದಕ್ಕೆ ಕಾಯುತ್ತಿದ್ದಾನೆ?” ಎಂದು ಕೇಳಿದನು.</verse>
				<verse number="14">ಅಹೀಮೆಲೆಕನು ಅರಸನಿಗೆ ಉತ್ತರವಾಗಿ, “ನಿನ್ನ ಸಮಸ್ತ ಸೇವಕರಲ್ಲಿ ದಾವೀದನ ಹಾಗೆ ನಂಬಿಗಸ್ತನಾದವನು ಯಾರಿದ್ದಾರೆ? ಅವನು ಅರಸನಿಗೆ ಅಳಿಯನೂ ನಿಮ್ಮ ಅಂಗರಕ್ಷಕರ ನಾಯಕನೂ ನಿನ್ನ ಮನೆಯಲ್ಲಿ ಘನವುಳ್ಳವನೂ ಆಗಿದ್ದಾನೆ.</verse>
				<verse number="15">ನಾನು ಅವನಿಗೋಸ್ಕರ ದೇವರನ್ನು ಕೇಳಿಕೊಂಡದ್ದು ಅದೇ ಮೊದಲನೆಯದೋ? ಅಲ್ಲವೇ ಅಲ್ಲ. ಅರಸನು ತನ್ನ ಸೇವಕನ ಮೇಲಾದರೂ ಇಲ್ಲವೆ ಅವನ ಕುಟುಂಬದವರ ಮೇಲಾದರೂ ಇಂಥ ಅಪವಾದವನ್ನು ಹೊರಿಸಬಾರದು, ಏಕೆಂದರೆ ಆ ಕಾರ್ಯದ ಬಗ್ಗೆ ನಮಗೇನೂ ತಿಳಿದಿಲ್ಲ,” ಎಂದನು.</verse>
				<verse number="16">ಅದಕ್ಕೆ ಅರಸನು, “ಅಹೀಮೆಲೆಕನೇ, ನೀನೂ ನಿನ್ನ ತಂದೆಯ ಮನೆಯ ಸಮಸ್ತರೂ ನಿಶ್ಚಯವಾಗಿ ಸಾಯಲೇಬೇಕು,” ಎಂದನು.</verse>
				<verse number="17">ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆ, “ನೀವು ತಿರುಗಿಕೊಂಡು ಯೆಹೋವ ದೇವರ ಯಾಜಕರನ್ನು ಕೊಂದುಹಾಕಿರಿ. ಏಕೆಂದರೆ ಅವರ ಕೈ ದಾವೀದನಿಗೆ ಸಹಾಯಕವಾಗಿದೆ. ಅವನು ಓಡಿ ಹೋಗುವುದನ್ನು ಅವರು ತಿಳಿದಿದ್ದು, ಅದನ್ನು ನನಗೆ ತಿಳಿಸದೆ ಹೋದರು,” ಎಂದನು. ಆದರೆ ಅರಸನ ಸೇವಕರು ಯೆಹೋವ ದೇವರ ಯಾಜಕರ ಮೇಲೆ ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು.</verse>
				<verse number="18">ಆಗ ಅರಸನು ದೋಯೇಗನಿಗೆ, “ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು,” ಎಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು, ನಾರುಬಟ್ಟೆಯ ಏಫೋದನ್ನು ಧರಿಸಿಕೊಳ್ಳುವವರಾದ ಎಂಬತ್ತೈದು ಯಾಜಕರನ್ನು ಆ ದಿನದಲ್ಲಿ ಕೊಂದನು.</verse>
				<verse number="19">ಇದಲ್ಲದೆ ಯಾಜಕರ ಪಟ್ಟಣವಾದ ನೋಬಿನಲ್ಲಿ ಇರುವ ಪುರುಷರನ್ನೂ, ಸ್ತ್ರೀಯರನ್ನೂ, ಮಕ್ಕಳನ್ನೂ, ಕೂಸುಗಳನ್ನೂ, ಎತ್ತುಗಳನ್ನೂ, ಕತ್ತೆಗಳನ್ನೂ, ಕುರಿಗಳನ್ನೂ ಖಡ್ಗದಿಂದ ಹೊಡೆದುಬಿಟ್ಟನು.</verse>
				<verse number="20">ಆದರೆ ಅಹೀಟೂಬನ ಮಗನಾಗಿರುವ ಅಹೀಮೆಲೆಕನ ಮಕ್ಕಳಲ್ಲಿ ಒಬ್ಬನಾದ ಅಬಿಯಾತರನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಹೋದನು.</verse>
				<verse number="21">ಸೌಲನು ಯೆಹೋವ ದೇವರ ಯಾಜಕರನ್ನು ಕೊಂದುಹಾಕಿದ ವರ್ತಮಾನವನ್ನು ಅಬಿಯಾತರನು ದಾವೀದನಿಗೆ ತಿಳಿಸಿದನು.</verse>
				<verse number="22">ಆಗ ದಾವೀದನು ಅಬಿಯಾತರನಿಗೆ, “ಎದೋಮ್ಯನಾದ ದೋಯೇಗನು ಅಲ್ಲಿ ಇದ್ದುದರಿಂದ ಅವನು ಸೌಲನಿಗೆ ನಿಶ್ಚಯವಾಗಿ ತಿಳಿಸುವನೆಂದು ನಾನು ಆ ದಿನವೇ ನೆನೆಸಿಕೊಂಡೆ. ನಿನ್ನ ತಂದೆಯ ಮನೆಯ ಸಮಸ್ತರ ಪ್ರಾಣಹತ್ಯೆಗೆ ಕಾರಣನಾದವನು ನಾನೇ.</verse>
				<verse number="23">ನನ್ನ ಬಳಿಯಲ್ಲಿ ಇರು; ಭಯಪಡಬೇಡ; ಏಕೆಂದರೆ ನನ್ನ ಪ್ರಾಣವನ್ನು ಹುಡುಕುವವನು ನಿನ್ನ ಪ್ರಾಣವನ್ನು ಹುಡುಕುವನು; ನೀನು ನನ್ನ ಸಂಗಡ ಇದ್ದರೆ ಸುರಕ್ಷಿತನಾಗಿರುವಿ,” ಎಂದನು.</verse>
			</chapter>
			<chapter number="23">
				<verse number="1">“ಫಿಲಿಷ್ಟಿಯರು ಕೆಯೀಲಾಕ್ಕೆ ವಿರೋಧವಾಗಿ ಯುದ್ಧಮಾಡಿ ಕಣಗಳನ್ನು ಕೊಳ್ಳೆಮಾಡುತ್ತಿದ್ದಾರೆ,” ಎಂದು ದಾವೀದನಿಗೆ ತಿಳಿಸಿದರು.</verse>
				<verse number="2">ಆದ್ದರಿಂದ ದಾವೀದನು, “ನಾನು ಈ ಫಿಲಿಷ್ಟಿಯರನ್ನು ಹೊಡೆಯಲು ಹೋಗಲೋ?” ಎಂದು ಯೆಹೋವ ದೇವರನ್ನು ಕೇಳಿದನು. ಅದಕ್ಕೆ ಯೆಹೋವ ದೇವರು, “ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ನಗರವನ್ನು ರಕ್ಷಿಸು,” ಎಂದರು.</verse>
				<verse number="3">ಆಗ ದಾವೀದನ ಜನರು ಅವನಿಗೆ, “ಇಗೋ, ನಾವು ಇಲ್ಲಿ ಯೆಹೂದದಲ್ಲಿರುವಾಗಲೇ ಭಯಪಡುತ್ತೇವೆ. ಆದರೆ ನಾವು ಫಿಲಿಷ್ಟಿಯರ ಸೈನ್ಯಗಳಿಗೆ ವಿರೋಧವಾಗಿ ಕೆಯೀಲಾ ನಗರಕ್ಕೆ ಹೋದರೆ ಎಷ್ಟು ಅಧಿಕವಾದ ಭಯವಾಗುವುದು,” ಎಂದರು.</verse>
				<verse number="4">ದಾವೀದನು ತಿರುಗಿ ಯೆಹೋವ ದೇವರನ್ನು ಕೇಳಿದನು. ಅದಕ್ಕೆ ಯೆಹೋವ ದೇವರು ಉತ್ತರವಾಗಿ, “ನೀನೆದ್ದು ಕೆಯೀಲಾ ನಗರಕ್ಕೆ ಹೋಗು; ಏಕೆಂದರೆ ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದರು.</verse>
				<verse number="5">ಹಾಗೆಯೇ ದಾವೀದನೂ, ಅವನ ಜನರೂ ಎದ್ದು ಕೆಯೀಲಾ ನಗರಕ್ಕೆ ಹೋಗಿ, ಫಿಲಿಷ್ಟಿಯರ ಸಂಗಡ ಯುದ್ಧಮಾಡಿ, ಅವರ ಪಶುಗಳನ್ನು ಹಿಡಿದುಕೊಂಡು ಬಂದು, ಅವರನ್ನು ಪೂರ್ಣವಾಗಿ ಸೋಲಿಸಿದರು. ಈ ಪ್ರಕಾರ ದಾವೀದನು ಕೆಯೀಲಾ ನಗರದ ನಿವಾಸಿಗಳನ್ನು ರಕ್ಷಿಸಿದನು.</verse>
				<verse number="6">ಅಹೀಮೆಲೆಕನ ಮಗ ಅಬಿಯಾತರನು ಕೆಯೀಲಾ ನಗರದಲ್ಲಿ ಇರುವ ದಾವೀದನ ಬಳಿಗೆ ಓಡಿ ಬಂದಾಗ, ಅವನ ಕೈಯಲ್ಲಿ ಏಫೋದು ಇತ್ತು.</verse>
				<verse number="7">ದಾವೀದನು ಕೆಯೀಲಾ ನಗರಕ್ಕೆ ಬಂದಿದ್ದಾನೆ ಎಂಬ ವಿಷಯ ಸೌಲನಿಗೆ ಮುಟ್ಟಿತು. ಆಗ ಅವನು, “ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ಏಕೆಂದರೆ ಅವನು ಬಾಗಿಲುಗಳೂ, ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಈಗ ತಪ್ಪಿಸಿಕೊಳ್ಳಲಾರನು,” ಎಂದುಕೊಂಡನು.</verse>
				<verse number="8">ಆಗ ಸೌಲನು ದಾವೀದನನ್ನೂ, ಅವನ ಜನರನ್ನೂ ಮುತ್ತಿಕೊಳ್ಳಲು ತನ್ನ ಸೈನಿಕರನ್ನು ಯುದ್ಧಕ್ಕೆ ಹೋಗಲು ಕೆಯೀಲಾ ನಗರಕ್ಕೆ ಕರೆದನು.</verse>
				<verse number="9">ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿದ್ದರಿಂದ ಯಾಜಕನಾದ ಅಬಿಯಾತರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದನು.</verse>
				<verse number="10">ಆಗ ದಾವೀದನು, “ಇಸ್ರಾಯೇಲ್ ದೇವರಾದ ಯೆಹೋವ ದೇವರೇ, ಸೌಲನು ಕೆಯೀಲಾ ನಗರಕ್ಕೆ ಬಂದು, ನನ್ನ ನಿಮಿತ್ತ ಪಟ್ಟಣವನ್ನು ಕೆಡಿಸಲು ಹುಡುಕುತ್ತಿದ್ದಾನೆಂದು ನಿಮ್ಮ ಸೇವಕನು ಖಂಡಿತವಾಗಿ ಕೇಳಿದನು.</verse>
				<verse number="11">ಕೆಯೀಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿಮ್ಮ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ದಯಮಾಡಿ ಇದನ್ನು ನಿಮ್ಮ ಸೇವಕನಿಗೆ ತಿಳಿಸಿರಿ,” ಎಂದನು. ಅದಕ್ಕೆ ಯೆಹೋವ ದೇವರು, “ಅವನು ಬರುವನು,” ಎಂದರು.</verse>
				<verse number="12">ಅನಂತರ ದಾವೀದನು, “ಕೆಯೀಲಾ ಪಟ್ಟಣದವರು ನನ್ನನ್ನೂ, ನನ್ನ ಜನರನ್ನೂ ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ?” ಎಂದು ಕೇಳಿದನು. ಯೆಹೋವ ದೇವರು, “ಅವರು ಒಪ್ಪಿಸಿಕೊಡುವರು,” ಎಂದರು.</verse>
				<verse number="13">ಆದ್ದರಿಂದ ದಾವೀದನೂ, ಹೆಚ್ಚು ಕಡಿಮೆ ಆರುನೂರು ಮಂದಿಯಿದ್ದ ತನ್ನ ಜನರೂ ಎದ್ದು ಕೆಯೀಲಾವನ್ನು ಬಿಟ್ಟು ವಿವಿಧ ಕಡೆಗಳಲ್ಲಿ ಅಲೆದಾಡಿದರು. ದಾವೀದನು ಕೆಯೀಲಾದಿಂದ ತಪ್ಪಿಸಿಕೊಂಡು ಹೋದನೆಂದು ಸೌಲನಿಗೆ ಗೊತ್ತಾಗಲು ಅವನು ಪ್ರಯಾಣವನ್ನು ನಿಲ್ಲಿಸಿಬಿಟ್ಟನು.</verse>
				<verse number="14">ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ, ಜೀಫ್ ಎಂಬ ಮರುಭೂಮಿಯ ಬೆಟ್ಟದಲ್ಲಿಯೂ ವಾಸವಾಗಿದ್ದನು. ಸೌಲನು ದಿನವೂ ಅವನನ್ನು ಹುಡುಕುತ್ತಿದ್ದನು. ಆದರೆ ದೇವರು ದಾವೀದನನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ.</verse>
				<verse number="15">ತನ್ನ ಪ್ರಾಣವನ್ನು ತೆಗೆಯುವುದಕ್ಕೆ ಸೌಲನು ಹೊರಟಿದ್ದಾನೆಂದು ದಾವೀದನು ತಿಳಿದಾಗ, ಅವನು ಜೀಫ್ ಅರಣ್ಯದ ಹೋರೆಷದಲ್ಲಿ ಅಡಗಿಕೊಂಡಿದ್ದನು.</verse>
				<verse number="16">ಆಗ ಸೌಲನ ಮಗ ಯೋನಾತಾನನು ಎದ್ದು ಮರುಭೂಮಿಯಲ್ಲಿರುವ ದಾವೀದನ ಬಳಿಗೆ ಹೋಗಿ, ಅವನನ್ನು ದೇವರಲ್ಲಿ ಬಲಪಡಿಸಿ ಸಹಾಯಮಾಡಿದನು.</verse>
				<verse number="17">ಯೋನಾತಾನನು ಅವನಿಗೆ, “ಭಯಪಡಬೇಡ, ಏಕೆಂದರೆ ನನ್ನ ತಂದೆಯಾದ ಸೌಲನ ಕೈ ನಿನ್ನನ್ನು ಹಿಡಿಯುವುದಿಲ್ಲ. ನೀನು ಇಸ್ರಾಯೇಲಿನ ಮೇಲೆ ಅರಸನಾಗಿರುವಿ. ನಾನು ನಿನಗೆ ಎರಡನೆಯವನಾಗಿರುವೆನು ಮತ್ತು ಹೀಗೆ ಆಗುವುದೆಂದು ನನ್ನ ತಂದೆಯಾದ ಸೌಲನು ಸಹ ತಿಳಿದಿದ್ದಾನೆ,” ಎಂದನು.</verse>
				<verse number="18">ಅವರಿಬ್ಬರೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿಕೊಂಡರು. ದಾವೀದನು ಹೋರೆಷದಲ್ಲಿಯೇ ಉಳಿದನು. ಆದರೆ ಯೋನಾತಾನನು ತನ್ನ ಮನೆಗೆ ಹೋದನು.</verse>
				<verse number="19">ಆಗ ಜೀಫ್ಯರು ಗಿಬೆಯದಲ್ಲಿರುವ ಸೌಲನ ಬಳಿಗೆ ಬಂದು, “ದಾವೀದನು ನಮ್ಮ ಪಕ್ಷವಾಗಿಯೇ ಹೋರೆಷದ ಗಿರಿಗಳಲ್ಲಿ ಅಂದರೆ ಯೆಷಿಮೋನಿನ ದಕ್ಷಿಣದಲ್ಲಿ ಹಕೀಲಾ ಗುಡ್ಡದಲ್ಲಿರುವ ಘೋರಾರಣ್ಯದಲ್ಲಿ ನಮ್ಮೊಂದಿಗೆ ಅಡಗಿಕೊಂಡಿದ್ದನಲ್ಲವೇ?</verse>
				<verse number="20">ಈಗ ಅರಸನೇ, ನೀನು ನಿನ್ನ ಪ್ರಾಣದ ಇಚ್ಛೆ ಇದ್ದ ಹಾಗೆ ಇಳಿದು ಬಾ. ಅವನನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವ ಭಾರವು ನಮ್ಮದು,” ಎಂದರು.</verse>
				<verse number="21">ಆಗ ಸೌಲನು, “ನೀವು ನನ್ನ ಮೇಲೆ ಕನಿಕರಪಟ್ಟ ಕಾರಣ, ಯೆಹೋವ ದೇವರಿಂದ ನಿಮಗೆ ಆಶೀರ್ವಾದವಾಗಲಿ.</verse>
				<verse number="22">ನೀವು ದಯಮಾಡಿ ಹೋಗಿ ಅವನು ಹೆಜ್ಜೆ ಇಡುವ ಸ್ಥಳವನ್ನೂ, ಅಲ್ಲಿ ಅವನನ್ನು ನೋಡಿದವರು ಯಾರು ಎಂಬುದನ್ನೂ ಇನ್ನೂ ಸೂಕ್ಷ್ಮವಾಗಿ ತಿಳಿದುಕೊಂಡು ನೋಡಿರಿ. ಏಕೆಂದರೆ ಅವನು ಬಹು ಉಪಾಯದಿಂದ ಪ್ರವರ್ತಿಸುತ್ತಾನೆಂದು ನನಗೆ ಹೇಳುತ್ತಾರೆ.</verse>
				<verse number="23">ಅವನು ಅಡಗಿಕೊಂಡಿರುವ ಸಮಸ್ತ ರಹಸ್ಯ ಸ್ಥಳಗಳನ್ನೂ ನೋಡಿ ತಿಳಿದುಕೊಂಡು, ನಿಶ್ಚಯವಾದ ವರ್ತಮಾನವನ್ನು ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ. ಆಗ ನಾನು ನಿಮ್ಮ ಸಂಗಡ ಬಂದು ಅವನು ದೇಶದಲ್ಲಿದ್ದರೆ, ಯೆಹೂದದ ಸಹಸ್ರ ಕುಲದಲ್ಲಿಯೂ ಅವನನ್ನು ಹುಡುಕಿ ಅವನನ್ನು ಹಿಡಿಯುವೆನು,” ಎಂದನು.</verse>
				<verse number="24">ಆದ್ದರಿಂದ ಅವರು ಎದ್ದು ಸೌಲನ ಮುಂದೆ ಜೀಫಕ್ಕೆ ಹೊರಟು ಹೋದರು. ಆದರೆ ದಾವೀದನೂ, ಅವನ ಜನರೂ ಯೆಷಿಮೋನಿನ ದಕ್ಷಿಣ ದಿಕ್ಕಿನಲ್ಲಿ ಇರುವ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಮಾವೋನಿನ ಮರುಭೂಮಿಯಲ್ಲಿದ್ದರು.</verse>
				<verse number="25">ಸೌಲನೂ, ಅವನ ಜನರೂ ಅವನನ್ನು ಹುಡುಕಲು ಬಂದರು. ಇದು ದಾವೀದನಿಗೆ ತಿಳಿದಾಗ, ಅವನು ಬಂಡೆಗಳಲ್ಲಿ ಇಳಿದು ಮಾವೋನಿನ ಮರುಭೂಮಿಯಲ್ಲಿ ವಾಸಿಸಿದನು. ಅದನ್ನು ಸೌಲನು ಕೇಳಿ ಮಾವೋನಿನ ಮರುಭೂಮಿಯಲ್ಲಿ ದಾವೀದನನ್ನು ಹಿಂದಟ್ಟಿದನು.</verse>
				<verse number="26">ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು. ದಾವೀದನೂ, ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು. ಸೌಲನಿಗೆ ಭಯಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆಪಡುತ್ತಿದ್ದರು. ಆಗ ಸೌಲನೂ, ಅವನ ಜನರೂ ಅವರನ್ನು ಹಿಡಿಯುವಂತೆ ಸುತ್ತಿಕೊಂಡರು.</verse>
				<verse number="27">ಆದರೆ ಒಬ್ಬ ಸೇವಕನು ಸೌಲನ ಬಳಿಗೆ ಬಂದು, “ನೀನು ತ್ವರೆಯಾಗಿ ಬಾ. ಫಿಲಿಷ್ಟಿಯರು ದೇಶದ ಮೇಲೆ ದಂಡೆತ್ತಿ ಬಂದಿದ್ದಾರೆ,” ಎಂದನು.</verse>
				<verse number="28">ಆದ್ದರಿಂದ ಸೌಲನು ದಾವೀದನನ್ನು ಹಿಂದಟ್ಟುವುದನ್ನು ಬಿಟ್ಟು, ಫಿಲಿಷ್ಟಿಯರಿಗೆ ಎದುರಾಗಿ ಹೋದನು. ಆದಕಾರಣ ಆ ಸ್ಥಳಕ್ಕೆ ಸೇಲಾ ಅಮ್ಮಾಲೆಕೋತ್ ಎಂದರೆ, ಅಡ್ಡ ಬೆಟ್ಟ ಎಂದು ಹೆಸರಿಟ್ಟರು.</verse>
				<verse number="29">ದಾವೀದನು ಆ ಸ್ಥಳವನ್ನು ಬಿಟ್ಟು ಹೋಗಿ ಏನ್ಗೆದಿಯಲ್ಲಿರುವ ಬಲವಾದ ಗವಿಗಳಲ್ಲಿ ವಾಸಿಸಿದನು.</verse>
			</chapter>
			<chapter number="24">
				<verse number="1">ಆಗ ಸೌಲನು ಫಿಲಿಷ್ಟಿಯರನ್ನು ಹಿಂದಟ್ಟಿ ತಿರುಗಿ ಬಂದಾಗ, “ದಾವೀದನು ಏನ್ಗೆದಿ ಮರುಭೂಮಿಯಲ್ಲಿ ಇದ್ದಾನೆ,” ಎಂದು ಅವನಿಗೆ ತಿಳಿದುಬಂದಿತು.</verse>
				<verse number="2">ಆಗ ಸೌಲನು ಸಮಸ್ತ ಇಸ್ರಾಯೇಲಿನಲ್ಲಿ ಶ್ರೇಷ್ಠರಾದ ಮೂರು ಸಾವಿರ ಸೈನಿಕರನ್ನು ತೆಗೆದುಕೊಂಡು ದಾವೀದನನ್ನೂ, ಅವನ ಜನರನ್ನೂ ಹುಡುಕಲು ಕಾಡುಮೇಕೆಗಳಿರುವ ಬಂಡೆಗಳಿಗೆ ಹೋದನು.</verse>
				<verse number="3">ಸೌಲನು ಮಾರ್ಗದಲ್ಲಿ ಕುರಿಹಟ್ಟಿಗಳು ಇರುವ ಗವಿಯ ಬಳಿಗೆ ಬಂದು, ಅದರಲ್ಲಿ ಅವನು ಶೌಚಕ್ಕಾಗಿ ಹೋದನು. ಆದರೆ ದಾವೀದನೂ, ಅವನ ಜನರೂ ಅದೇ ಗವಿಯ ಹಿಂದೆ ಅಡಗಿಕೊಂಡಿದ್ದರು.</verse>
				<verse number="4">ಆಗ ದಾವೀದನ ಜನರು ಅವನಿಗೆ, “ ‘ನಾನು ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು. ಆಗ ನೀನು ನಿನ್ನ ಇಷ್ಟಾನುಸಾರ ಅವನಿಗೆ ಮಾಡಬಹುದು,’ ಎಂದು ಯೆಹೋವ ದೇವರು ನಿನಗೆ ಹೇಳಿದ ದಿನವು ಇದೇ,” ಎಂದರು. ಆಗ ದಾವೀದನು ಎದ್ದು ಹೋಗಿ ರಹಸ್ಯವಾಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.</verse>
				<verse number="5">ಆದರೆ ಹಾಗೆ ಮಾಡಿದ ಮೇಲೆ, ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡದ್ದರಿಂದ ದಾವೀದನ ಮನಃಸ್ಸಾಕ್ಷಿ ಅವನನ್ನು ಹಂಗಿಸತೊಡಗಿತು.</verse>
				<verse number="6">ದಾವೀದನು ತನ್ನ ಜನರಿಗೆ, “ಅವನು ಯೆಹೋವ ದೇವರ ಅಭಿಷಿಕ್ತನಾದದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ, ನನ್ನ ಒಡೆಯನಿಗೆ ಈ ಕಾರ್ಯ ಮಾಡುವುದನ್ನು ಯೆಹೋವ ದೇವರು ತಡೆಯಲಿ,” ಎಂದನು.</verse>
				<verse number="7">ಹೀಗೆಯೇ ದಾವೀದನು ತನ್ನ ಜನರನ್ನು ಸೌಲನ ಮೇಲೆ ಬೀಳಗೊಡದೆ, ಈ ಮಾತುಗಳಿಂದ ಅವರನ್ನು ನಿಲ್ಲಿಸಿದನು. ಸೌಲನು ಎದ್ದು ಗವಿಯನ್ನು ಬಿಟ್ಟು, ಹೊರಗೆ ನಡೆದು ಹೋದನು.</verse>
				<verse number="8">ತರುವಾಯ ದಾವೀದನು ಎದ್ದು ಗವಿಯಿಂದ ಹೊರಗೆ ಬಂದು ಸೌಲನಿಗೆ, “ಅರಸನೇ, ನನ್ನ ಒಡೆಯನೇ,” ಎಂದು ಕೂಗಿದನು. ಸೌಲನು ಹಿಂದಿರುಗಿ ನೋಡಿದಾಗ, ದಾವೀದನು ನೆಲದವರೆಗೆ ಬಗ್ಗಿ ವಂದಿಸಿದನು.</verse>
				<verse number="9">ಸೌಲನಿಗೆ ದಾವೀದನು, “ಇಗೋ, ದಾವೀದನು ನಿನಗೆ ಕೇಡು ಮಾಡಲು ಹುಡುಕುತ್ತಾನೆಂದು ಹೇಳುವ ಮನುಷ್ಯರ ಮಾತುಗಳನ್ನು ಏಕೆ ಕೇಳುತ್ತಿದ್ದೀ?</verse>
				<verse number="10">ಯೆಹೋವ ದೇವರು ಈ ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರೆಂಬುದನ್ನು ಈ ದಿನ ನಿನ್ನ ಕಣ್ಣುಗಳು ಕಂಡವು. ಕೆಲವರು ನಿನ್ನನ್ನು ಕೊಂದುಹಾಕಲು ನನಗೆ ಒತ್ತಾಯಮಾಡಿದರು. ಆದರೆ ನಾನು ಅವರಿಗೆ, ‘ಅರಸನು ಯೆಹೋವ ದೇವರ ಅಭಿಷಿಕ್ತನು. ಆದುದರಿಂದ ನಾನು ನನ್ನ ಒಡೆಯನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ’ ಎಂದು ಹೇಳಿ ನಿನ್ನನ್ನು ಉಳಿಸಿದೆ.</verse>
				<verse number="11">ಇದಲ್ಲದೆ ನನ್ನ ತಂದೆಯೇ, ಇಲ್ಲಿ ನೋಡು! ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ತುಂಡನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ, ನಿನ್ನ ನಿಲುವಂಗಿಯ ಅಂಚನ್ನು ಮಾತ್ರ ಕತ್ತರಿಸಿಕೊಂಡದ್ದರಿಂದ, ನನ್ನಲ್ಲಿ ಕೆಟ್ಟತನವೂ, ದ್ರೋಹವೂ ಇಲ್ಲವೆಂದು ಇದು ಸೂಚಿಸುತ್ತಿದೆ; ನಾನು ನಿನಗೆ ವಿರೋಧವಾಗಿ ತಪ್ಪುಮಾಡಲಿಲ್ಲವೆಂದು ತಿಳಿದುಕೋ. ಹೀಗಿದ್ದರೂ, ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.</verse>
				<verse number="12">ಯೆಹೋವ ದೇವರು ನನ್ನ ನಿನ್ನ ಮಧ್ಯದಲ್ಲಿ ನ್ಯಾಯತೀರಿಸಲಿ. ಹೌದು, ಯೆಹೋವ ದೇವರು ತಾವೇ ನನಗೋಸ್ಕರ ನಿನ್ನ ವಿಷಯವಾಗಿ ಮುಯ್ಯಿಗೆ ಮುಯ್ಯಿ ಮಾಡಲಿ. ಆದರೆ ನಾನು ನಿನ್ನ ಮೇಲೆ ನನ್ನ ಕೈಯೆತ್ತುವುದಿಲ್ಲ.</verse>
				<verse number="13">ಪೂರ್ವಿಕರು ಹೇಳಿದ ಸಾಮತಿಯ ಪ್ರಕಾರ, ‘ದುಷ್ಟರಿಂದ ದುಷ್ಟತ್ವವು ಹುಟ್ಟುವುದು’ ಆದರೂ ನಾನು ನಿನಗೆ ವಿರೋಧವಾಗಿ ನನ್ನ ಕೈ ಮುಟ್ಟುವುದಿಲ್ಲ.</verse>
				<verse number="14">“ಇಸ್ರಾಯೇಲಿನ ಅರಸನು ಯಾರನ್ನು ಹಿಂದಟ್ಟಿ ಹೊರಟನು? ಯಾರನ್ನು ಹಿಂದಟ್ಟುತ್ತೀ? ಸತ್ತ ನಾಯಿಯನ್ನೇ? ಒಂದು ನೊಣವನ್ನೇ?</verse>
				<verse number="15">ಯೆಹೋವ ದೇವರು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ, ನನ್ನ ಪರವಾಗಿ ವಾದಿಸಿ, ನನ್ನನ್ನು ನಿನ್ನ ಕೈಯಿಂದ ತಪ್ಪಿಸಿಬಿಡಲಿ,” ಎಂದನು.</verse>
				<verse number="16">ದಾವೀದನ ಮಾತುಗಳು ಮುಗಿದ ನಂತರ, ಸೌಲನು ದಾವೀದನಿಗೆ, “ದಾವೀದನೇ, ನನ್ನ ಮಗನೇ, ಇದು ನಿನ್ನ ಸ್ವರವೋ?” ಎಂದು ಗಟ್ಟಿಯಾಗಿ ಅತ್ತನು.</verse>
				<verse number="17">ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತನು. ನಾನು ನಿನಗೆ ಕೇಡನ್ನು ಮಾಡಿದರೂ, ನೀನು ನನಗೆ ಒಳ್ಳೆಯದನ್ನು ಮಾಡಿದೆ.</verse>
				<verse number="18">ಯೆಹೋವ ದೇವರು ನನ್ನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಾಗ, ನೀನು ನನ್ನನ್ನು ಕೊಂದುಹಾಕದೆ ಇದ್ದುದರಿಂದ, ನೀನು ನನಗೆ ಉಪಕಾರ ಮಾಡಿದ್ದನ್ನು ಈ ಹೊತ್ತು ತೋರಿಸಿದೆ.</verse>
				<verse number="19">ಏಕೆಂದರೆ ಯಾವನಾದರೂ ತನ್ನ ಶತ್ರುವನ್ನು ಹಿಡಿದುಕೊಂಡರೆ, ಅವನನ್ನು ಸುರಕ್ಷಿತನಾಗಿ ಬಿಟ್ಟುಬಿಡುವನೋ? ಈ ಹೊತ್ತು ನೀನು ನನಗೆ ಒಳ್ಳೆಯದನ್ನು ಮಾಡಿದ್ದರಿಂದ ಯೆಹೋವ ದೇವರು ನಿನಗೆ ಒಳ್ಳೆಯದನ್ನು ಮಾಡಲಿ.</verse>
				<verse number="20">ಈಗ ಇಗೋ, ನೀನು ನಿಶ್ಚಯವಾಗಿ ಅರಸನಾಗುವೆ ಎಂದೂ, ಇಸ್ರಾಯೇಲಿನ ರಾಜ್ಯವು ನಿನ್ನ ಕೈಯಲ್ಲಿ ಸ್ಥಿರವಾಗುವುದೆಂದೂ ನಾನು ಚೆನ್ನಾಗಿ ಬಲ್ಲೆನು.</verse>
				<verse number="21">ಆದ್ದರಿಂದ ನೀನು ನನ್ನ ತರುವಾಯ ನನ್ನ ಸಂತಾನವನ್ನು ಕಡಿದುಬಿಡುವುದಿಲ್ಲವೆಂದೂ, ನನ್ನ ಗೋತ್ರದಿಂದ ನನ್ನ ಹೆಸರನ್ನು ತೆಗೆದುಹಾಕುವುದಿಲ್ಲವೆಂದೂ ನನಗೆ ಯೆಹೋವ ದೇವರ ಹೆಸರಿನಲ್ಲಿ ಪ್ರಮಾಣಮಾಡು,” ಎಂದನು.</verse>
				<verse number="22">ಹಾಗೆಯೇ ದಾವೀದನು ಸೌಲನಿಗೆ ಪ್ರಮಾಣ ಮಾಡಿದನು. ಆಗ ಸೌಲನು ತನ್ನ ಮನೆಗೆ ಹೋದನು. ಆದರೆ ದಾವೀದನೂ ಅವನ ಮನುಷ್ಯರೂ ಆಶ್ರಯಗಿರಿಗೆ ಏರಿಹೋದರು.</verse>
			</chapter>
			<chapter number="25">
				<verse number="1">ಸಮುಯೇಲನು ಮರಣಹೊಂದಿದನು. ಇಸ್ರಾಯೇಲರೆಲ್ಲರು ಕೂಡಿಬಂದು ಅವನಿಗೋಸ್ಕರ ಗೋಳಾಡಿ, ರಾಮದಲ್ಲಿರುವ ಅವನ ಮನೆಯ ಅಂಗಳದಲ್ಲಿ ಅವನನ್ನು ಸಮಾಧಿಮಾಡಿದರು. ಅನಂತರ ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.</verse>
				<verse number="2">ಆದರೆ ಕರ್ಮೆಲಿನಲ್ಲಿ ಸೊತ್ತುಗಳಿರುವ ಮಾವೋನಿನ ಒಬ್ಬ ಮನುಷ್ಯನಿದ್ದನು. ಅವನು ಬಹು ಸಿರಿವಂತನಾಗಿದ್ದನು. ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು.</verse>
				<verse number="3">ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆ ಕತ್ತರಿಸುತ್ತಿದ್ದನು. ಈ ಮನುಷ್ಯನ ಹೆಸರು ನಾಬಾಲನು. ಅವನ ಹೆಂಡತಿಯ ಹೆಸರು ಅಬೀಗೈಲಳು. ಆ ಸ್ತ್ರೀಯು ಬಹು ಬುದ್ಧಿವಂತೆ ಹಾಗು ಸುಂದರಿ. ಆದರೆ ಆ ಮನುಷ್ಯನು ಒರಟಾದವನೂ ದುಷ್ಕರ್ಮಿಯೂ ಆಗಿದ್ದನು. ಅವನು ಕಾಲೇಬನ ವಂಶಸ್ಥನು.</verse>
				<verse number="4">ನಾಬಾಲನು ತನ್ನ ಕುರಿಗಳ ಉಣ್ಣೆ ಕತ್ತರಿಸುವ ವರ್ತಮಾನವನ್ನು ದಾವೀದನು ಮರುಭೂಮಿಯಲ್ಲಿ ಕೇಳಿದನು.</verse>
				<verse number="5">ಆಗ ದಾವೀದನು ಹತ್ತು ಮಂದಿ ಯುವಕರನ್ನು ಕಳುಹಿಸಿದನು. ದಾವೀದನು ಅವರಿಗೆ, “ನೀವು ಕರ್ಮೆಲಿಗೆ ಹೋಗಿ ನಾಬಾಲನ ಬಳಿಗೆ ಸೇರಿದಾಗ, ನನ್ನ ಹೆಸರಿನಿಂದ ಅವನ ಕ್ಷೇಮಸಮಾಚಾರವನ್ನು ಕೇಳಿ, ಬಾಳುವವನಾದ ಅವನಿಗೆ ಹೇಳಬೇಕಾದದ್ದೇನೆಂದರೆ:</verse>
				<verse number="6">‘ನಿನಗೆ ಸಮಾಧಾನವೂ, ನಿನ್ನ ಮನೆಗೆ ಸಮಾಧಾನವೂ ನಿನ್ನ ಸರ್ವಸಂಪತ್ತಿಗೂ ಸಮಾಧಾನವೂ ಆಗಲಿ.</verse>
				<verse number="7">“ ‘ಈಗ ನಿನಗೆ ಕುರಿಗಳ ಉಣ್ಣೆ ಕತ್ತರಿಸುವವರು ಉಂಟೆಂದು ಕೇಳಿದ್ದೇನೆ. ಆದರೆ ನಮ್ಮ ಸಂಗಡವಿದ್ದ ನಿನ್ನ ಕುರಿಕಾಯುವವರು ಕರ್ಮೆಲಿನಲ್ಲಿದ್ದ ದಿವಸಗಳೆಲ್ಲಾ ನಾವು ಅವರಿಗೆ ತೊಂದರೆಪಡಿಸಲಿಲ್ಲ. ಅವರು ಒಂದಾದರೂ ಕಳೆದುಕೊಳ್ಳಲಿಲ್ಲ.</verse>
				<verse number="8">ನಿನ್ನ ಸೇವಕರನ್ನು ಕೇಳು. ಅವರು ನಿನಗೆ ಹೇಳುವರು. ಆದ್ದರಿಂದ ಈಗ ಈ ಯುವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಲಿ. ಏಕೆಂದರೆ ಒಳ್ಳೆಯ ದಿವಸದಲ್ಲಿ ಬಂದೆವು. ನಿನ್ನ ಕೈಯಲ್ಲಿ ದೊರಕುವುದನ್ನು ನಿನ್ನ ಸೇವಕರಿಗೂ, ನಿನ್ನ ಪುತ್ರನಾದ ದಾವೀದನಿಗೂ ದಯಪಾಲಿಸು ಎಂದು ಅವನಿಗೆ ಹೇಳಿರಿ,’ ” ಎಂದು ಅವರನ್ನು ಕಳುಹಿಸಿದನು.</verse>
				<verse number="9">ದಾವೀದನ ಯುವಕರು ಬಂದು ಈ ಮಾತುಗಳನ್ನೆಲ್ಲಾ ದಾವೀದನ ಹೆಸರಿನಲ್ಲಿ ನಾಬಾಲನಿಗೆ ಹೇಳಿ ಮೌನವಾದರು.</verse>
				<verse number="10">ನಾಬಾಲನು ದಾವೀದನ ಸೇವಕರಿಗೆ ಉತ್ತರವಾಗಿ, “ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಉಂಟು.</verse>
				<verse number="11">ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆ ಕತ್ತರಿಸುವವರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನು ತೆಗೆದು, ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ?” ಎಂದನು.</verse>
				<verse number="12">ಹೀಗೆ ದಾವೀದನ ಯುವಕರು ತಮ್ಮ ಮಾರ್ಗವಾಗಿ ಹಿಂದಕ್ಕೆ ತಿರುಗಿ ದಾವೀದನ ಬಳಿಗೆ ಬಂದು, ಈ ಮಾತುಗಳನ್ನೆಲ್ಲಾ ತಿಳಿಸಿದರು.</verse>
				<verse number="13">ಆಗ ದಾವೀದನು ತನ್ನ ಜನರಿಗೆ, “ನಿಮ್ಮಲ್ಲಿ ಒಬ್ಬೊಬ್ಬನೂ ನಿಮ್ಮ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ,” ಎಂದನು. ಪ್ರತಿಯೊಬ್ಬನೂ ತನ್ನ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡನು. ಹಾಗೆಯೇ ದಾವೀದನೂ ತನ್ನ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು. ಇನ್ನೂರು ಮಂದಿ ಸಲಕರಣೆಗಳ ಬಳಿಯಲ್ಲಿ ನಿಂತರು.</verse>
				<verse number="14">ಆಗ ಕೆಲಸದವರಲ್ಲಿ ಯುವಕನಾದವನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ, “ನಮ್ಮ ಯಜಮಾನನನ್ನು ವಂದಿಸಲು ದಾವೀದನು ಮರುಭೂಮಿಯಿಂದ ದೂತರನ್ನು ಕಳುಹಿಸಿದನು.</verse>
				<verse number="15">ಆದರೆ ಇವನು ಅವರನ್ನು ನಿಂದಿಸಿದನು. ಆ ಜನರು ನಮಗೆ ಮಹಾ ಉಪಕಾರಿಗಳಾಗಿದ್ದರು. ನಾವು ಹೊರಗೆ ಇರುವಾಗ ಅವರು ನಮ್ಮಲ್ಲಿ ಸಂಚರಿಸುತ್ತಿದ್ದ ದಿನಗಳೆಲ್ಲಾ ನಾವು ತೊಂದರೆ ಪಡಲಿಲ್ಲ. ಒಂದನ್ನಾದರೂ ಕಳೆದುಕೊಳ್ಳಲಿಲ್ಲ.</verse>
				<verse number="16">ಇದಲ್ಲದೆ ಅವರ ಸಂಗಡ ನಾವು ಕುರಿಗಳನ್ನು ಮೇಯಿಸಿಕೊಂಡು ಇದ್ದ ದಿನಗಳೆಲ್ಲಾ ನಮಗೆ ಅವರು ರಾತ್ರಿ ಹಗಲು ಒಂದು ಕೋಟೆಯಂತೆ ಗೋಡೆಯಾಗಿದ್ದರು.</verse>
				<verse number="17">ಈಗ ನೀನು ಮಾಡಬೇಕಾದದ್ದೇನೆಂದು ಆಲೋಚಿಸಿ ನೋಡು. ಏಕೆಂದರೆ ಕೇಡು ನಮ್ಮ ಯಜಮಾನನ ಮೇಲೂ ಅವನ ಮನೆಯ ಮೇಲೆಯೂ ನಿಶ್ಚಯವಾಗಿದೆ. ದುಷ್ಟನಾಗಿರುವ ಅವನ ಸಂಗಡ ಮಾತನಾಡುವುದು ಅಸಾಧ್ಯ,” ಎಂದನು.</verse>
				<verse number="18">ಆಗ ಅಬೀಗೈಲಳು ತೀವ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸವನ್ನೂ ಬೇಯಿಸಿದ ಐದು ಕುರಿಗಳ ಮಾಂಸವನ್ನೂ ಐವತ್ತು ಸೇರು ಹುರಿದ ಧಾನ್ಯವನ್ನೂ ಒಣಗಿದ ನೂರು ದ್ರಾಕ್ಷಿ ಗೊನೆಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ಕತ್ತೆಗಳ ಮೇಲೆ ಹೇರಿಸಿಕೊಂಡು,</verse>
				<verse number="19">ತನ್ನ ಸೇವಕರಿಗೆ, “ನನಗೆ ಮುಂದಾಗಿ ಹೋಗಿರಿ. ನಾನು ನಿಮ್ಮ ಹಿಂದೆ ಬರುವೆನು,” ಎಂದು ಹೇಳಿದಳು. ಆದರೆ ತನ್ನ ಗಂಡನಾದ ನಾಬಾಲನಿಗೆ ಇದನ್ನು ತಿಳಿಸಲಿಲ್ಲ.</verse>
				<verse number="20">ಆಗ, ಅವಳು ಒಂದು ಕತ್ತೆಯ ಮೇಲೆ ಹತ್ತಿಕೊಂಡು ಮಾರ್ಗದಲ್ಲಿ ಬೆಟ್ಟದ ಮರೆಗೆ ಬಂದಾಗ, ದಾವೀದನೂ ಅವನ ಜನರೂ ಅವಳಿಗೆ ಎದುರಾಗಿ ಇಳಿದು ಬಂದರು. ಅವಳು ಅವರನ್ನು ಎದುರುಗೊಂಡಳು.</verse>
				<verse number="21">ಅಷ್ಟರಲ್ಲಿ ದಾವೀದನು ತನ್ನ ಜನರಿಗೆ, “ಅಡವಿಯಲ್ಲಿದ್ದ ಇವನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಅವನು ನಾನು ಮಾಡಿದ ಉಪಕಾರಕ್ಕೆ ಅಪಕಾರ ಮಾಡಿದ್ದಾನೆ.</verse>
				<verse number="22">ಬೆಳಗಾಗುವಷ್ಟರಲ್ಲಿ ಅವನ ಜನರಲ್ಲಿ ನಾನು ಒಬ್ಬ ಗಂಡಸನನ್ನಾದರೂ ಉಳಿಸಿದರೆ, ದೇವರು ದಾವೀದನಾದ ನನಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ,” ಎಂದು ಹೇಳಿದ್ದನು.</verse>
				<verse number="23">ಅಬೀಗೈಲಳು ದಾವೀದನನ್ನು ಕಂಡಾಗ, ಕತ್ತೆಯಿಂದಿಳಿದು ದಾವೀದನಿಗೆ ಎದುರಾಗಿ ಹೋಗಿ, ಅವನ ಮುಂದೆ ಬೋರಲು ಬಿದ್ದು ನಮಸ್ಕರಿಸಿದಳು.</verse>
				<verse number="24">ಆಮೇಲೆ ಅವನ ಪಾದಗಳ ಮೇಲೆ ಬಿದ್ದು, “ನನ್ನ ಒಡೆಯನೇ, ಈ ಅಕ್ರಮವು ನನ್ನ ಮೇಲಿರಲಿ; ದಯಮಾಡಿ ನಿನ್ನ ದಾಸಿಯಾದ ನಾನು ಮಾತಾಡುವುದಕ್ಕೆ ಅಪ್ಪಣೆಯಾಗಲಿ. ನಿನ್ನ ದಾಸಿಯ ಮಾತುಗಳನ್ನು ಕೇಳು.</verse>
				<verse number="25">ನನ್ನ ಒಡೆಯನೇ, ದಯಮಾಡಿ ದುಷ್ಟನಾದ ನಾಬಾಲನ ಮೇಲೆ ಲಕ್ಷ್ಯವಿಡಬೇಡ. ಏಕೆಂದರೆ ಅವನ ಹೆಸರು ಹೇಗೋ, ಹಾಗೆಯೇ ಅವನು. ಅವನು ನಾಬಾಲನೆಂಬ ಹೆಸರುಳ್ಳವನು. ಬುದ್ಧಿಹೀನತೆ ಅವನಲ್ಲಿ ಇದೆ. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಸೇವಕರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ.</verse>
				<verse number="26">ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವುದಕ್ಕೂ, ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಹೋಗುವುದನ್ನು ದೇವರು ತಡೆದದ್ದರಿಂದ, ಯೆಹೋವ ದೇವರ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ ನಿನ್ನ ಶತ್ರುಗಳೂ, ನನ್ನ ಒಡೆಯನಿಗೆ ಕೇಡನ್ನು ಹುಡುಕುವವರೂ ನಾಬಾಲನ ಹಾಗೆಯೇ ಆಗಲಿ.</verse>
				<verse number="27">ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತೆಗೆದುಕೊಂಡು ಬಂದ ಈ ಕಾಣಿಕೆಯು ನನ್ನ ಒಡೆಯನ ಹೆಜ್ಜೆಯಲ್ಲಿ ನಡೆಯುವವರಿಗೆ ಸಲ್ಲಲಿ.</verse>
				<verse number="28">“ನೀನು ದಯಮಾಡಿ ನಿನ್ನ ದಾಸಿಯ ತಪ್ಪನ್ನು ಮನ್ನಿಸಬೇಕು. ಏಕೆಂದರೆ ನನ್ನ ಒಡೆಯನು ಯೆಹೋವ ದೇವರ ಯುದ್ಧಗಳನ್ನು ನಡೆಸುತ್ತಾನೆ. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನ ಕಾಣದಿರಲಿ. ಯೆಹೋವ ದೇವರು ನಿಶ್ಚಯವಾಗಿ ನನ್ನ ಒಡೆಯನಾದ ನಿನಗೆ ಶಾಶ್ವತ ರಾಜ್ಯವನ್ನು ಸ್ಥಿರಪಡಿಸುವರು.</verse>
				<verse number="29">ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡುಕುವುದಕ್ಕೆ ಒಬ್ಬನು ಎದ್ದಿದ್ದಾನೆ. ಆದರೂ ನನ್ನ ಒಡೆಯನ ಪ್ರಾಣವು ದೇವರಾದ ಯೆಹೋವ ದೇವರ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಿರುವುದು. ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ದೇವರು ಎಸೆದುಬಿಡುವರು.</verse>
				<verse number="30">ಇದಲ್ಲದೆ ನನ್ನ ಒಡೆಯನಾದ ನಿನ್ನನ್ನು ಕುರಿತು ಯೆಹೋವ ದೇವರು ಹೇಳಿದ ಒಳ್ಳೆಯದೆಲ್ಲವನ್ನು ನಿನಗೆ ಮಾಡಿ, ನಿನ್ನನ್ನು ಇಸ್ರಾಯೇಲರ ಮೇಲೆ ನಾಯಕನಾಗಿ ನೇಮಿಸಿದಾಗ,</verse>
				<verse number="31">ನೀನು ಸುಮ್ಮನೆ ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿಗೆ ಮುಯ್ಯಿ ತೀರಿಸಿಕೊಂಡದ್ದರಿಂದ ಉಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವದಿಲ್ಲ. ಆದರೆ ನನ್ನ ಒಡೆಯನನ್ನು ಯೆಹೋವ ದೇವರು ಚೆನ್ನಾಗಿ ನಡೆಸಿದಾಗ, ನಿನ್ನ ದಾಸಿಯನ್ನು ಜ್ಞಾಪಕಮಾಡಿಕೊಳ್ಳಬೇಕು,” ಎಂದಳು.</verse>
				<verse number="32">ಆಗ ದಾವೀದನು ಅಬೀಗೈಲಳಿಗೆ, “ನನ್ನನ್ನು ಎದುರುಗೊಳ್ಳುವುದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ.</verse>
				<verse number="33">ನಿನ್ನ ಬುದ್ಧಿಮಾತಿಗಾಗಿಯೂ, ನಾನು ರಕ್ತ ಚೆಲ್ಲುವುದಕ್ಕೂ, ನನ್ನ ಕೈಯಿಂದ ನನಗೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಈ ಹೊತ್ತು ನನ್ನನ್ನು ತಡೆದ ನಿನಗೆ ಆಶೀರ್ವಾದ ಆಗಲಿ.</verse>
				<verse number="34">ಏಕೆಂದರೆ ನಿನಗೆ ಕೇಡು ಆಗದ ಹಾಗೆ ನನ್ನನ್ನು ತಡೆದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಜೀವದಾಣೆ, ನೀನು ತ್ವರೆಯಾಗಿ ನನ್ನನ್ನು ಎದುರುಗೊಳ್ಳದಿದ್ದರೆ, ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ,” ಎಂದು ಹೇಳಿದನು.</verse>
				<verse number="35">ಅವಳು ತನಗೆ ತಂದದ್ದನ್ನು ದಾವೀದನು ತೆಗೆದುಕೊಂಡು ಅವಳಿಗೆ, “ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ನಾನು ನಿನ್ನ ಮಾತನ್ನು ಕೇಳಿ ನಿನ್ನ ಮುಖ ದಾಕ್ಷಿಣ್ಯವನ್ನು ನೋಡಿದೆನು,” ಎಂದನು.</verse>
				<verse number="36">ಅಬೀಗೈಲಳು ನಾಬಾಲನ ಬಳಿಗೆ ಬಂದಾಗ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸಗೊಂಡಿತ್ತು. ಆದಕಾರಣ ಅವಳು ಉದಯವಾಗುವವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ, ಹೆಚ್ಚಾದದ್ದನ್ನಾಗಲಿ ತಿಳಿಸಲಿಲ್ಲ.</verse>
				<verse number="37">ಉದಯದಲ್ಲಿ ನಾಬಾಲನ ದ್ರಾಕ್ಷಾರಸದ ಅಮಲು ಇಳಿದಾಗ, ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು, ಹೃದಯಾಘಾತವಾಗಿ ಅವನು ಕಲ್ಲಿನ ಹಾಗಾದನು.</verse>
				<verse number="38">ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ, ಯೆಹೋವ ದೇವರ ದಂಡನೆಯ ನಿಮಿತ್ತ ನಾಬಾಲನು ಸತ್ತುಹೋದನು.</verse>
				<verse number="39">ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ, “ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ, ತನ್ನ ಸೇವಕನನ್ನು ಕೇಡು ಮಾಡಗೊಡದ ಹಾಗೆ ತಡೆದ ಯೆಹೋವ ದೇವರು ಸ್ತುತಿಹೊಂದಲಿ. ಏಕೆಂದರೆ ಯೆಹೋವ ದೇವರು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದರು,” ಎಂದನು. ದಾವೀದನು ಅಬೀಗೈಲಳನ್ನು ತನಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕಾಗಿ ಅವಳ ಸಂಗಡ ಮಾತನಾಡಲು ಸೇವಕರನ್ನು ಕಳುಹಿಸಿದನು.</verse>
				<verse number="40">ದಾವೀದನ ಸೇವಕರು ಕರ್ಮೆಲಿನಲ್ಲಿರುವ ಅಬೀಗೈಲಳ ಬಳಿಗೆ ಬಂದಾಗ ಅವಳಿಗೆ, “ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕಾಗಿ ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದನು,” ಎಂದು ಹೇಳಿದರು.</verse>
				<verse number="41">ಆಗ ಅವಳು ಎದ್ದು ಬೋರಲು ಬಿದ್ದು, “ನಿನ್ನ ದಾಸಿಯಾದ ನಾನು ನನ್ನ ಒಡೆಯನ ಸೇವಕರ ಪಾದಗಳನ್ನು ತೊಳೆಯುವುದಕ್ಕೂ ಸಿದ್ಧಳಾಗಿದ್ದೇನೆ,” ಎಂದಳು.</verse>
				<verse number="42">ಅಬೀಗೈಲಳು ತ್ವರೆಯಾಗಿ ಎದ್ದು ಕತ್ತೆಯ ಮೇಲೆ ಹತ್ತಿಕೊಂಡು, ತನ್ನ ಸಂಗಡ ಇರುವ ಐದು ಮಂದಿ ದಾಸಿಯರನ್ನು ಕರೆದುಕೊಂಡು ದಾವೀದನ ಸೇವಕರ ಹಿಂದೆ ಹೋಗಿ, ಅವನಿಗೆ ಹೆಂಡತಿಯಾದಳು.</verse>
				<verse number="43">ಇದಲ್ಲದೆ ದಾವೀದನು ಇಜ್ರೆಯೇಲ್ ಊರಿನವಳಾದ ಅಹೀನೋವಮಳನ್ನು ಮದುವೆ ಮಾಡಿಕೊಂಡಿದ್ದನು. ಅವರಿಬ್ಬರೂ ಅವನ ಹೆಂಡತಿಯರಾದರು.</verse>
				<verse number="44">ಆದರೆ ಸೌಲನು ದಾವೀದನ ಹೆಂಡತಿಯಾಗಿದ್ದ ಮೀಕಲಳೆಂಬ ತನ್ನ ಮಗಳನ್ನು ಗಲ್ಲೀಮ್ ಪಟ್ಟಣದ ಲಯಿಷನ ಮಗನಾದ ಪಲ್ಟೀ ಎಂಬವನಿಗೆ ಮದುವೆ ಮಾಡಿಕೊಟ್ಟಿದ್ದನು.</verse>
			</chapter>
			<chapter number="26">
				<verse number="1">ಜೀಫ್ಯರು ಗಿಬೆಯದಲ್ಲಿರುವ ಸೌಲನ ಬಳಿಗೆ ಬಂದು, “ದಾವೀದನು ಯೆಷಿಮೋನಿಗೆ ಎದುರಾದ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ,” ಎಂದರು.</verse>
				<verse number="2">ಆಗ ಸೌಲನು ಎದ್ದು ಜೀಫ್ ಮರುಭೂಮಿಯಲ್ಲಿರುವ ದಾವೀದನನ್ನು ಹುಡುಕಲು ಇಸ್ರಾಯೇಲಿನಲ್ಲಿ ಆಯ್ದ ಮೂರು ಸಾವಿರ ಜನರ ಸಂಗಡ ಜೀಫ್ ಮರುಭೂಮಿಗೆ ಹೊರಟುಹೋಗಿ,</verse>
				<verse number="3">ಯೆಷಿಮೋನಿಗೆ ಎದುರಾದ ಮಾರ್ಗದಲ್ಲಿರುವ ಹಕೀಲಾ ಬೆಟ್ಟದಲ್ಲಿ ದಂಡಿಳಿಸಿದನು. ದಾವೀದನು ಸೌಲನು ತನ್ನ ಹಿಂದೆ ಮರುಭೂಮಿಗೆ ಬಂದದ್ದನ್ನು ನೋಡಿ, ಮರುಭೂಮಿಯಲ್ಲಿ ನಿಂತನು.</verse>
				<verse number="4">ದಾವೀದನು ಗೂಢಚಾರರನ್ನು ಕಳುಹಿಸಿ, ಸೌಲನು ಬಂದದ್ದು ನಿಶ್ಚಯವೆಂದು ತಿಳಿದುಕೊಂಡನು.</verse>
				<verse number="5">ದಾವೀದನು ಎದ್ದು ಸೌಲನು ಇಳಿದುಕೊಂಡಿದ್ದ ಸ್ಥಳಕ್ಕೆ ಬಂದನು. ಸೌಲನೂ, ಅವನ ದಂಡಿನ ನಾಯಕನಾಗಿರುವ ನೇರನ ಮಗನಾದ ಅಬ್ನೇರನೂ ಮಲಗಿರುವ ಸ್ಥಳವನ್ನು ದಾವೀದನು ನೋಡಿದನು. ಸೌಲನು ಮಧ್ಯದಲ್ಲಿ ಮಲಗಿದ್ದನು. ಜನರು ಅವನ ಸುತ್ತಲೂ ದಂಡಾಗಿ ಇಳಿದುಕೊಂಡಿದ್ದರು.</verse>
				<verse number="6">ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಮತ್ತು ಚೆರೂಯಳ ಮಗನಾಗಿರುವ ಯೋವಾಬನ ಸಹೋದರ ಅಬೀಷೈಯನ್ನು ನೋಡಿ, “ನನ್ನ ಸಂಗಡ ಸೌಲನ ದಂಡಿನಲ್ಲಿ ಪ್ರವೇಶಿಸಲು ಬರುವವರು ಯಾರು?” ಎಂದು ಕೇಳಿದನು. ಅದಕ್ಕೆ ಅಬೀಷೈಯನು, “ನಾನು ನಿನ್ನ ಸಂಗಡ ಬರುವೆನು,” ಎಂದನು.</verse>
				<verse number="7">ದಾವೀದನೂ, ಅಬೀಷೈಯನೂ ರಾತ್ರಿಯಲ್ಲಿ ಆ ಜನರ ಬಳಿಗೆ ಬಂದರು. ಸೌಲನು ಕಂದಕದೊಳಗೆ ಮಲಗಿ ನಿದ್ರೆ ಮಾಡುತ್ತಿದ್ದನು. ಅವನ ಈಟಿಯು ಅವನ ತಲೆದಿಂಬಿನ ಬಳಿಯಲ್ಲಿ ನೆಟ್ಟಿತ್ತು. ಆದರೆ ಅವನ ಸುತ್ತಲು ಅಬ್ನೇರನೂ, ಜನರೂ ಮಲಗಿದ್ದರು.</verse>
				<verse number="8">ಆಗ ಅಬೀಷೈಯನು ದಾವೀದನಿಗೆ, “ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾರೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಿಂದ ನೆಲಕ್ಕೆ ಹತ್ತುವಂತೆ ತಿವಿಯಲು ಅಪ್ಪಣೆಕೊಡಬೇಕು; ಎರಡು ಸಾರಿ ಹೊಡೆಯುವುದಿಲ್ಲ,” ಎಂದನು.</verse>
				<verse number="9">ಆದರೆ ದಾವೀದನು ಅಬೀಷೈಯನಿಗೆ, “ಅವನನ್ನು ಸಂಹರಿಸಬೇಡ. ಏಕೆಂದರೆ ಅಪರಾಧವಿಲ್ಲದೆ ಯೆಹೋವ ದೇವರ ಅಭಿಷಿಕ್ತನ ವಿರೋಧವಾಗಿ ಕೈ ಹಾಕುವವನು ಯಾರು?” ಎಂದನು.</verse>
				<verse number="10">ಇದಲ್ಲದೆ ಇನ್ನೂ ದಾವೀದನು, “ಯೆಹೋವ ದೇವರ ಜೀವದಾಣೆ, ಯೆಹೋವ ದೇವರೇ ಅವನನ್ನು ಹೊಡೆಯುವರು, ಇಲ್ಲವೆ ಅವನ ಕಾಲ ಬಂದು ಅವನು ಸಾಯುವನು, ಇಲ್ಲವೆ ಯುದ್ಧಕ್ಕೆ ಹೋಗಿ ನಾಶವಾಗುವನು.</verse>
				<verse number="11">ನಾನು ನನ್ನ ಕೈಯನ್ನು ಯೆಹೋವ ದೇವರ ಅಭಿಷಿಕ್ತನ ಮೇಲೆ ಹಾಕದ ಹಾಗೆ ಯೆಹೋವ ದೇವರು ನನಗೆ ತಡೆಯಲಿ. ಈಗ ಅವನ ತಲೆದಿಂಬಿನ ಬಳಿಯಲ್ಲಿರುವ ಈಟಿಯನ್ನೂ, ನೀರಿನ ತಂಬಿಗೆಯನ್ನೂ ತೆಗೆದುಕೋ ನಾವು ಹೋಗೋಣ,” ಎಂದನು.</verse>
				<verse number="12">ದಾವೀದನು ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಈಟಿಯನ್ನೂ, ನೀರಿನ ತಂಬಿಗೆಯನ್ನೂ ತೆಗೆದುಕೊಂಡನು. ಅವರು ಹೊರಟು ಹೋದರು. ಒಬ್ಬರಾದರೂ ನೋಡಲಿಲ್ಲ ಇಲ್ಲವೆ ತಿಳಿದುಕೊಳ್ಳಲಿಲ್ಲ, ಅರಿತಿದ್ದಿಲ್ಲ, ಯಾರೂ ಎಚ್ಚೆತ್ತಿರಲಿಲ್ಲ. ಏಕೆಂದರೆ ಯೆಹೋವ ದೇವರಿಂದ ಗಾಢನಿದ್ರೆಯು ಅವರ ಮೇಲೆ ಇಳಿದ ಕಾರಣ ಅವರೆಲ್ಲರು ಗಾಢ ನಿದ್ರೆಯಲ್ಲಿದ್ದರು.</verse>
				<verse number="13">ದಾವೀದನು ದಾಟಿ ಆ ಕಡೆಗೆ ಹೋಗಿ ತಮಗೂ, ಅವರಿಗೂ ಮಧ್ಯದಲ್ಲಿ ಬಹಳ ಸ್ಥಳ ಉಂಟಾಗುವ ಹಾಗೆ ದೂರವಾಗಿರುವ ಒಂದು ಬೆಟ್ಟದ ಕೊನೆಯಲ್ಲಿ ನಿಂತು,</verse>
				<verse number="14">ಸೈನಿಕರಿಗೂ ನೇರನ ಮಗನಾದ ಅಬ್ನೇರನಿಗೂ ಕೇಳಿಸುವಂತೆ ಕೂಗಿ, “ಅಬ್ನೇರನೇ, ನೀನು ಉತ್ತರ ಕೊಡುವುದಿಲ್ಲವೋ?” ಎಂದನು. ಅದಕ್ಕೆ ಅಬ್ನೇರನು ಉತ್ತರವಾಗಿ, “ಅರಸನಿಗೆ ಎದುರಾಗಿ ಕೂಗುವ ನೀನು ಯಾರು?” ಎಂದನು.</verse>
				<verse number="15">ಆಗ ದಾವೀದನು ಅಬ್ನೇರನಿಗೆ, “ನೀನು ಪರಾಕ್ರಮಶಾಲಿಯಲ್ಲವೇ? ಇಸ್ರಾಯೇಲಿನಲ್ಲಿ ನಿನಗೆ ಸಮಾನನಾದವನು ಯಾರು? ಆದರೆ ನೀನು ನಿನ್ನ ಒಡೆಯನಾದ ಅರಸನನ್ನು ಕಾಯದೆ ಹೋದದ್ದೇನು? ಜನರಲ್ಲಿ ಒಬ್ಬನು ನಿನ್ನ ಒಡೆಯನಾದ ಅರಸನನ್ನು ಸಂಹರಿಸುವುದಕ್ಕೆ ಬಂದಿದ್ದನು.</verse>
				<verse number="16">ನೀನು ಮಾಡಿದ ಈ ಕಾರ್ಯ ಒಳ್ಳೆಯದಲ್ಲ. ಯೆಹೋವ ದೇವರ ಜೀವದಾಣೆ, ಯೆಹೋವ ದೇವರ ಅಭಿಷಿಕ್ತನಾದ ನಿಮ್ಮ ಒಡೆಯನನ್ನು ಕಾಯದೆ ಹೋದದ್ದರಿಂದ, ನೀವು ಮರಣಕ್ಕೆ ಯೋಗ್ಯರು. ಈಗ ಅರಸನ ತಲೆದಿಂಬಿನ ಬಳಿಯಲ್ಲಿದ್ದ ಅವನ ಈಟಿಯೂ, ನೀರಿನ ತಂಬಿಗೆಯೂ ಎಲ್ಲಿ ಇವೆಯೋ ನೋಡು,” ಎಂದನು.</verse>
				<verse number="17">ಆಗ ಸೌಲನು ದಾವೀದನ ಸ್ವರವನ್ನು ತಿಳಿದುಕೊಂಡು, “ನನ್ನ ಪುತ್ರನಾದ ದಾವೀದನೇ, ಇದು ನಿನ್ನ ಸ್ವರವಲ್ಲವೋ?” ಎಂದನು. ದಾವೀದನು, “ಅರಸನಾದ ನನ್ನ ಒಡೆಯನೇ, ನನ್ನ ಧ್ವನಿಯೇ ಹೌದು,” ಎಂದನು.</verse>
				<verse number="18">“ನನ್ನ ಒಡೆಯನು ತನ್ನ ಸೇವಕನನ್ನು ಹೀಗೆ ಹಿಂದಟ್ಟುವುದೇನು? ನಾನೇನು ಮಾಡಿದೆನು?</verse>
				<verse number="19">ನನ್ನ ಕೈಯಲ್ಲಿ ಏನು ಕೆಟ್ಟತನವಿದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಯೆಹೋವ ದೇವರು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ, ಕಾಣಿಕೆಯನ್ನು ಅಂಗೀಕರಿಸಲಿ. ಆದರೆ ಮಾನವರು ಇದನ್ನು ಮಾಡಿದರೆ, ಅವರು ಯೆಹೋವ ದೇವರ ಮುಂದೆ ಶಾಪಗ್ರಸ್ತರಾಗಿರಲಿ. ಏಕೆಂದರೆ, ‘ನೀನು ಹೋಗಿ? ಅನ್ಯದೇವರುಗಳನ್ನು ಸೇವಿಸು,’ ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಯೆಹೋವ ದೇವರ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.</verse>
				<verse number="20">ಆದ್ದರಿಂದ ಯೆಹೋವ ದೇವರ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ, ಇಸ್ರಾಯೇಲಿನ ಅರಸನು ಒಂದು ನೊಣವನ್ನು ಹುಡುಕಲು ಹೊರಟನು,” ಎಂದನು.</verse>
				<verse number="21">ಆಗ ಸೌಲನು, “ನಾನು ಪಾಪಮಾಡಿದೆನು. ನನ್ನ ಮಗನಾದ ದಾವೀದನೇ ತಿರುಗಿ ಬಾ. ಏಕೆಂದರೆ ನನ್ನ ಪ್ರಾಣ ಈ ಹೊತ್ತು ನಿನ್ನ ದೃಷ್ಟಿಗೆ ಅಮೂಲ್ಯವಾಗಿದ್ದರಿಂದ ನಾನು ಇನ್ನು ಮೇಲೆ ನಿನಗೆ ಕೇಡು ಮಾಡೆನು. ಇದುವರೆಗೆ ನಾನು ಮಾಡಿದ್ದು ಹುಚ್ಚುತನವೂ, ದೊಡ್ಡ ತಪ್ಪೂ ಆಗಿದೆ,” ಎಂದನು.</verse>
				<verse number="22">ದಾವೀದನು ಉತ್ತರವಾಗಿ, “ಅರಸನ ಈಟಿಯು ಇಲ್ಲಿ ಇದೆ. ಸೇವಕರಲ್ಲಿ ಒಬ್ಬನು ಈ ಕಡೆಗೆ ಬಂದು, ಅದನ್ನು ತೆಗೆದುಕೊಂಡು ಹೋಗಲಿ.</verse>
				<verse number="23">ಆದರೆ ಯೆಹೋವ ದೇವರು ಪ್ರತಿಯೊಬ್ಬನಿಗೆ ಅವನ ನೀತಿಗೂ, ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಯೆಹೋವ ದೇವರು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರು. ಆದರೆ ನಾನು ಯೆಹೋವ ದೇವರ ಅಭಿಷಿಕ್ತನ ಮೇಲೆ ನನ್ನ ಕೈ ಚಾಚಲು ಮನಸ್ಸಿಲ್ಲದೆ ಇದ್ದೆನು.</verse>
				<verse number="24">ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ, ಹಾಗೆಯೇ ನನ್ನ ಪ್ರಾಣವು ಯೆಹೋವ ದೇವರ ದೃಷ್ಟಿಗೆ ದೊಡ್ಡದಾಗಿರಲಿ. ಅವರು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ,” ಎಂದನು.</verse>
				<verse number="25">ಆಗ ಸೌಲನು ದಾವೀದನಿಗೆ, “ನನ್ನ ಮಗನಾದ ದಾವೀದನೇ, ದೇವರು ನಿನ್ನನ್ನು ಆಶೀರ್ವದಿಸಲಿ. ನೀನು ಮಹತ್ಕಾರ್ಯಗಳನ್ನು ಮಾಡುವೆ, ಗೆದ್ದೇ ಗೆಲ್ಲುವೆ,” ಎಂದನು. ಹಾಗೆಯೇ ದಾವೀದನು ತನ್ನ ಮಾರ್ಗವಾಗಿ ಹೋದನು. ಸೌಲನು ತನ್ನ ಸ್ಥಳಕ್ಕೆ ಹಿಂದಿರುಗಿ ಹೋದನು.</verse>
			</chapter>
			<chapter number="27">
				<verse number="1">ಆದರೆ ದಾವೀದನು ತನ್ನ ಹೃದಯದಲ್ಲಿ, “ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಸಾಯುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿ ಹೋಗುವುದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು,” ಎಂದುಕೊಂಡನು.</verse>
				<verse number="2">ಆದ್ದರಿಂದ ದಾವೀದನು ಎದ್ದು ತನ್ನ ಸಂಗಡವಿದ್ದ ಆರುನೂರು ಜನರೊಡನೆ ಗತ್ ಊರಿನ ಅರಸನಾಗಿರುವ ಮಾವೋಕನ ಮಗ ಆಕೀಷನ ಬಳಿಗೆ ಹೋದನು.</verse>
				<verse number="3">ದಾವೀದನು ಗತ್ ಊರಿನಲ್ಲಿ ಆಕೀಷನ ಬಳಿಯಲ್ಲಿ ತಾನೂ, ತನ್ನ ಜನರೂ ವಾಸವಾಗಿದ್ದರು. ಪ್ರತಿ ಮನುಷ್ಯನು ತನ್ನ ಮನೆಯವರ ಸಹಿತವಾಗಿಯೂ, ದಾವೀದನು ತನ್ನ ಇಬ್ಬರು ಹೆಂಡತಿಯರಾದ ಇಜ್ರೆಯೇಲಿನವಳಾದ ಅಹೀನೋವಮಳು, ಕರ್ಮೇಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳು ಸಹಿತವಾಗಿಯೂ ಇದ್ದರು.</verse>
				<verse number="4">ದಾವೀದನು ಗತ್ ಊರಿಗೆ ಓಡಿಹೋದನೆಂದು ಸೌಲನಿಗೆ ತಿಳಿಸಲಾಯಿತು. ಆದ್ದರಿಂದ ಅವನು ಆ ತರುವಾಯ ದಾವೀದನನ್ನು ಹುಡುಕಲಿಲ್ಲ.</verse>
				<verse number="5">ದಾವೀದನು ಆಕೀಷನಿಗೆ, “ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದ್ದರೆ, ಗ್ರಾಮಾಂತರಗಳಲ್ಲಿ ನಾನು ಇರುವುದಕ್ಕೆ ಒಂದು ಸ್ಥಳ ನನಗೆ ಕೊಡು. ನಿನ್ನ ದಾಸನು ಏಕೆ ನಿನ್ನ ಸಂಗಡ ರಾಜ್ಯದ ಪಟ್ಟಣದಲ್ಲಿ ಇರಬೇಕು?” ಎಂದನು.</verse>
				<verse number="6">ಆಗ ಆಕೀಷನು ಆ ದಿವಸದಲ್ಲಿ ಚಿಕ್ಲಗ್ ಊರನ್ನು ಅವನಿಗೆ ಕೊಟ್ಟನು. ಆದ್ದರಿಂದ ಚಿಕ್ಲಗ್ ಇಂದಿನವರೆಗೂ ಯೆಹೂದದ ಅರಸರಿಗೆ ಸೇರಿದೆ.</verse>
				<verse number="7">ದಾವೀದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರ್ಷ ನಾಲ್ಕು ತಿಂಗಳು ವಾಸಿಸಿದ್ದನು.</verse>
				<verse number="8">ದಾವೀದನೂ, ಅವನ ಜನರೂ ಶೂರಿಗೆ ಹೋಗುವ ಮೇರೆಯಿಂದ ಈಜಿಪ್ಟಿನವರೆಗೂ ಇರುವ ಸೀಮೆಯಲ್ಲಿ ಪೂರ್ವದಿಂದ ವಾಸಿಸಿರುವವರಾದ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಅಮಾಲೇಕ್ಯರ ಮೇಲೆಯೂ ದಂಡೆತ್ತಿ ಹೋದರು.</verse>
				<verse number="9">ಆಗ ದಾವೀದನು ಪುರುಷರನ್ನಾದರೂ, ಸ್ತ್ರೀಯರನ್ನಾದರೂ ಉಳಿಸದೆ, ಆ ಸೀಮೆಯನ್ನು ಹೊಡೆದು, ಕುರಿಪಶುಗಳನ್ನೂ, ಕತ್ತೆಗಳನ್ನೂ, ಒಂಟೆಗಳನ್ನೂ, ವಸ್ತ್ರಗಳನ್ನೂ ತೆಗೆದುಕೊಂಡು ಆಕೀಷನ ಬಳಿಗೆ ತಿರುಗಿಬಂದನು.</verse>
				<verse number="10">ಆಗ ಆಕೀಷನು, “ಈ ಹೊತ್ತು ಎಲ್ಲಿ ಸುಲಿದುಕೊಂಡಿರಿ?” ಎಂದಾಗ ದಾವೀದನು, “ನಾವು ಯೆಹೂದದ ದಕ್ಷಿಣ ಸೀಮೆಯ ಮೇಲೆಯೂ, ಯೆರಹ್ಮೇಲ್ಯರ ದಕ್ಷಿಣ ಸೀಮೆಯ ಮೇಲೆಯೂ, ಕೇನ್ಯರ ದಕ್ಷಿಣ ಸೀಮೆಯ ಮೇಲೆಯೂ ಬಿದ್ದೆವು,” ಎಂದನು.</verse>
				<verse number="11">ದಾವೀದನು ಗತ್ ಪಟ್ಟಣಕ್ಕೆ ಒಬ್ಬ ಪುರುಷನನ್ನಾದರೂ ಸ್ತ್ರೀಯನನ್ನಾದರೂ ಜೀವಂತವಾಗಿ ತರಲಿಲ್ಲ. ಏಕೆಂದರೆ ಯಾರಾದರೂ ಹೋಗಿ ರಾಜನಾದ ಆಕೀಷನಿಗೆ ಸತ್ಯವನ್ನು ತಿಳಿಸಬಹುದೆಂದು ದಾವೀದನು ಯೋಚಿಸಿದನು. ಅವನು ಫಿಲಿಷ್ಟಿಯರ ಸೀಮೆಯಲ್ಲಿ ವಾಸವಾಗಿದ್ದ ಕಾಲದಲ್ಲೆಲ್ಲಾ ಇದೇ ರೀತಿ ಮಾಡುತ್ತಿದ್ದನು.</verse>
				<verse number="12">ಆಕೀಷನು ದಾವೀದನನ್ನು ನಂಬಿ, “ಇವನು ತನ್ನ ಜನರಾದ ಇಸ್ರಾಯೇಲರಿಗೆ ಅಸಹ್ಯವಾದನು, ಆದ್ದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿರುವನು,” ಎಂದನು.</verse>
			</chapter>
			<chapter number="28">
				<verse number="1">ಆ ದಿವಸಗಳಲ್ಲಿ ಫಿಲಿಷ್ಟಿಯರು ಇಸ್ರಾಯೇಲರ ಮೇಲೆ ಯುದ್ಧಮಾಡಲು ತಮ್ಮ ಸೈನ್ಯಗಳನ್ನು ಕೂಡಿಸಿಕೊಂಡರು. ಆಗ ಆಕೀಷನು ದಾವೀದನಿಗೆ, “ನೀನೂ, ನಿನ್ನ ಜನರೂ ಯುದ್ಧವನ್ನು ಮಾಡಲು ನಮ್ಮ ಸಂಗಡ ನಿಶ್ಚಯವಾಗಿ ಬರಬೇಕೆಂದು ತಿಳಿಯಲಿಲ್ಲವೋ?” ಎಂದನು.</verse>
				<verse number="2">ದಾವೀದನು ಆಕೀಷನಿಗೆ, “ನಿಶ್ಚಯವಾಗಿ ನಿನ್ನ ದಾಸನು ಮಾಡುವುದನ್ನು ನೀನೇ ತಿಳಿದುಕೊಳ್ಳುವಿ,” ಎಂದನು. ಆಕೀಷನು ದಾವೀದನಿಗೆ, “ಎಂದೆಂದಿಗೂ ನಾನು ನಿನ್ನನ್ನು ಕಾವಲುಗಾರನಾಗಿ ಮಾಡುವೆನು,” ಎಂದನು.</verse>
				<verse number="3">ಸಮುಯೇಲನು ಮರಣಹೊಂದಿದನು. ಇಸ್ರಾಯೇಲರೆಲ್ಲರು ಅವನಿಗೋಸ್ಕರ ಗೋಳಾಡಿ, ಅವನ ಸ್ವಂತ ಪಟ್ಟಣವಾದ ರಾಮದಲ್ಲಿ ಅವನನ್ನು ಹೂಳಿಟ್ಟರು. ಇದಲ್ಲದೆ ಸೌಲನು ಮಾಂತ್ರಿಕಳನ್ನೂ, ಭೂತಪ್ರೇತಗಳನ್ನು ಆರಾಧಿಸುವವರನ್ನೂ ದೇಶದಲ್ಲಿಂದ ಹೊರಡಿಸಿದ್ದನು.</verse>
				<verse number="4">ಆಗ ಫಿಲಿಷ್ಟಿಯರ ಸೈನ್ಯ ಕೂಡಿಬಂದು ಶೂನೇಮಿನಲ್ಲಿ ದಂಡಿಳಿದರು. ಸೌಲನು ಸಮಸ್ತ ಇಸ್ರಾಯೇಲನ್ನು ಕೂಡಿಸಿಕೊಂಡು ಗಿಲ್ಬೋವದಲ್ಲಿ ದಂಡಿಳಿದನು.</verse>
				<verse number="5">ಸೌಲನು ಫಿಲಿಷ್ಟಿಯರ ಸೈನ್ಯವನ್ನು ಕಂಡು ಭಯಪಟ್ಟನು. ಆತನ ಹೃದಯದಲ್ಲಿ ಭಯತುಂಬಿತು.</verse>
				<verse number="6">ಸೌಲನು ಯೆಹೋವ ದೇವರನ್ನು ಕೇಳಿಕೊಂಡಾಗ, ಯೆಹೋವ ದೇವರು ಅವನಿಗೆ ಸ್ವಪ್ನಗಳಿಂದಲಾದರೂ, ಊರೀಮಿನಿಂದಲಾದರೂ, ಪ್ರವಾದಿಗಳಿಂದಲಾದರೂ ಉತ್ತರ ಕೊಡಲಿಲ್ಲ.</verse>
				<verse number="7">ಆಗ ಸೌಲನು ತನ್ನ ದಾಸರಿಗೆ, “ನಾನು ವಿಚಾರಿಸುವಂತೆ ಮಾಂತ್ರಿಕಳಾದ ಒಬ್ಬ ಸ್ತ್ರೀಯನ್ನು ವಿಚಾರಿಸಿರಿ,” ಎಂದನು. ಅವನ ದಾಸರು ಅವನಿಗೆ, “ಇಗೋ, ಎಂದೋರಿನಲ್ಲಿ ಮಾಂತ್ರಿಕಳಾದ ಒಬ್ಬ ಸ್ತ್ರೀ ಇದ್ದಾಳೆ,” ಎಂದರು.</verse>
				<verse number="8">ಆಗ ಸೌಲನು ತನ್ನನ್ನು ಮರೆಮಾಡಿಕೊಳ್ಳುವಂತೆ ಬದಲು ವಸ್ತ್ರಗಳನ್ನು ಧರಿಸಿ, ತನ್ನ ಸಂಗಡ ಇಬ್ಬರನ್ನು ಕರೆದುಕೊಂಡು, ರಾತ್ರಿಯಲ್ಲಿ ಆ ಸ್ತ್ರೀಯ ಬಳಿಗೆ ಬಂದು ಅವಳಿಗೆ, “ನೀನು ದಯಮಾಡಿ ಸತ್ತವರ ಆತ್ಮವನ್ನು ವಿಚಾರಿಸಿ ನನಗೆ ಕಣಿ ಹೇಳು. ನಾನು ನಿನಗೆ ಹೇಳುವವನನ್ನು ನನಗೆ ಕಾಣುವಂತೆ ಮಾಡು,” ಎಂದನು.</verse>
				<verse number="9">ಆ ಸ್ತ್ರೀಯು ಅವನಿಗೆ, “ಸೌಲನು ಮಾಂತ್ರಿಕಳನ್ನೂ, ಭೂತಪ್ರೇತಗಳನ್ನು ಆರಾಧಿಸುವವರನ್ನೂ ದೇಶದಿಂದ ತೆಗೆದುಬಿಟ್ಟನೆಂದು ನೀನು ಬಲ್ಲೆ. ಈಗ ನಾನು ಸಾಯುವುದಕ್ಕೆ ಕಾರಣವಾಗುವ ಹಾಗೆ ಏಕೆ ನನ್ನ ಪ್ರಾಣಕ್ಕೆ ಉರುಳಿಡುತ್ತಿ?” ಎಂದಳು.</verse>
				<verse number="10">ಆಗ ಸೌಲನು, “ಯೆಹೋವ ದೇವರ ಜೀವದಾಣೆ, ಈ ಕಾರ್ಯಕ್ಕೋಸ್ಕರ ನಿನಗೆ ದಂಡನೆ ಬರುವುದಿಲ್ಲ,” ಎಂದು ಅವಳಿಗೆ ಯೆಹೋವ ದೇವರ ಮೇಲೆ ಪ್ರಮಾಣ ಮಾಡಿದನು.</verse>
				<verse number="11">ಅವಳು, “ನಿನಗೆ ನಾನು ಯಾರನ್ನು ಇಲ್ಲಿ ಬರಮಾಡಬೇಕು?” ಎಂದಳು. ಅದಕ್ಕವನು, “ಸಮುಯೇಲನನ್ನು ಬರಮಾಡು,” ಎಂದನು.</verse>
				<verse number="12">ಆ ಸ್ತ್ರೀಯು ಸಮುಯೇಲನನ್ನು ಕಂಡಾಗ ಮಹಾಶಬ್ದದಿಂದ ಕೂಗಿದಳು. ಆ ಸ್ತ್ರೀಯು, “ಏಕೆ ನನ್ನನ್ನು ಮೋಸಮಾಡಿದಿ? ನೀನೇ ಸೌಲನು,” ಎಂದಳು.</verse>
				<verse number="13">ಅರಸನು ಅವಳಿಗೆ, “ಭಯಪಡಬೇಡ, ನೀನು ಕಂಡದ್ದೇನು?” ಎಂದನು. ಆಗ ಸ್ತ್ರೀಯು ಸೌಲನಿಗೆ, “ಒಂದು ಆತ್ಮವು ಭೂಮಿಯಿಂದ ಎದ್ದು ಬರುವುದನ್ನು ಕಂಡೆನು,” ಎಂದಳು.</verse>
				<verse number="14">ಆಗ ಅವನು, “ಅವನ ರೂಪ ಹೇಗಿದೆ?” ಎಂದು ಅವಳನ್ನು ಕೇಳಿದನು. ಅವಳು, “ನಿಲುವಂಗಿಯನ್ನು ಹೊದ್ದಿರುವ ಮುದಿ ಪ್ರಾಯದವನಾದ ಒಬ್ಬ ಮನುಷ್ಯನು ಬರುತ್ತಿದ್ದಾನೆ,” ಎಂದಳು. ಅವನು ಸಮುಯೇಲನು ಎಂದು ಸೌಲನು ತಿಳಿದುಕೊಂಡು, ನೆಲದ ಮಟ್ಟಿಗೂ ಬಾಗಿ ಅಡ್ಡಬಿದ್ದನು.</verse>
				<verse number="15">ಆಗ ಸಮುಯೇಲನು ಸೌಲನಿಗೆ, “ನೀನು ನನ್ನನ್ನು ಇಲ್ಲಿ ಬರಮಾಡಿ ವಿಶ್ರಾಂತಿ ಕೆಡಿಸಿದೆ,” ಎಂದನು. ಅದಕ್ಕೆ ಸೌಲನು, “ನಾನು ಬಹಳ ಇಕ್ಕಟ್ಟಿನಲ್ಲಿದ್ದೇನೆ. ಏಕೆಂದರೆ ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಮಾಡುತ್ತಾರೆ. ಆದರೆ ದೇವರು ನನ್ನನ್ನು ಬಿಟ್ಟುಹೋದರು. ಅವರು ಪ್ರವಾದಿಗಳ ಮುಖಾಂತರವಾದರೂ, ಸ್ವಪ್ನದ ಮುಖಾಂತರವಾದರೂ ನನಗೆ ಉತ್ತರ ಕೊಡಲಿಲ್ಲ. ಆದ್ದರಿಂದ ನಾನು ಮಾಡಬೇಕಾದದ್ದನ್ನು ನೀನು ತಿಳಿಸುವ ಹಾಗೆ ನಿನ್ನನ್ನು ಕರೆಸಿದೆನು,” ಎಂದನು.</verse>
				<verse number="16">ಸಮುಯೇಲನು ಅವನಿಗೆ, “ಯೆಹೋವ ದೇವರು ನಿನ್ನನ್ನು ಬಿಟ್ಟು ಹೋಗಿ ನಿನಗೆ ಶತ್ರುವಾಗಿರುವಾಗ, ನೀನು ನನ್ನನ್ನು ಕೇಳುವುದು ಏಕೆ?</verse>
				<verse number="17">ಯೆಹೋವ ದೇವರು ನನ್ನ ಮುಖಾಂತರ ಹೇಳಿದ ಹಾಗೆಯೇ ನಿನಗೆ ಮಾಡಿದ್ದಾರೆ. ಯೆಹೋವ ದೇವರು ರಾಜ್ಯವನ್ನು ನಿನ್ನ ಕೈಯಿಂದ ತೆಗೆದುಕೊಂಡು, ಅದನ್ನು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟರು.</verse>
				<verse number="18">ನೀನು ಯೆಹೋವ ದೇವರ ಮಾತನ್ನು ಕೇಳದೆ, ಅಮಾಲೇಕ್ಯರ ಮೇಲೆ ಇದ್ದ ಅವರ ಉಗ್ರಕೋಪವನ್ನು ತೀರಿಸದೆ ಹೋದದ್ದರಿಂದ, ಯೆಹೋವ ದೇವರು ಈ ದಿವಸದಲ್ಲಿ ನಿನಗೆ ಹೀಗೆ ಮಾಡಿದರು.</verse>
				<verse number="19">ಯೆಹೋವ ದೇವರು ನಿನ್ನ ಸಹಿತವಾಗಿ ಇಸ್ರಾಯೇಲನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವರು. ನಾಳೆ ನೀನೂ, ನಿನ್ನ ಪುತ್ರರೂ ನನ್ನ ಸಂಗಡ ಇರುವಿರಿ. ಯೆಹೋವ ದೇವರು ಇಸ್ರಾಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು.</verse>
				<verse number="20">ಆಗ ಸೌಲನು ನೆಲದ ಮೇಲೆ ಬೋರಲು ಬಿದ್ದು, ಸಮುಯೇಲನ ಮಾತುಗಳಿಗೋಸ್ಕರ ಬಹಳವಾಗಿ ಭಯಪಟ್ಟನು. ಆ ದಿನವೆಲ್ಲಾ ಏನೂ ಊಟಮಾಡದೆ ಇದ್ದುದರಿಂದ ಅವನೊಳಗೆ ಶಕ್ತಿ ಇಲ್ಲದೆ ಹೋಯಿತು.</verse>
				<verse number="21">ಆಗ ಆ ಸ್ತ್ರೀಯು ಸೌಲನ ಬಳಿಗೆ ಬಂದು, ಅವನು ಬಹಳ ತಲ್ಲಣಪಟ್ಟನೆಂದು ಕಂಡು ಅವನಿಗೆ, “ನಿನ್ನ ದಾಸಿಯಾದ ನಾನು ನಿನ್ನ ಮಾತನ್ನು ಕೇಳಿ, ನನ್ನ ಪ್ರಾಣವನ್ನು ನನ್ನ ಕೈಯಲ್ಲಿ ಇಟ್ಟುಕೊಂಡವಳಾಗಿ, ನೀನು ನನಗೆ ಹೇಳಿದ ಮಾತುಗಳನ್ನು ಕೇಳಿದೆನು.</verse>
				<verse number="22">ಆದ್ದರಿಂದ ಈಗ ನೀನು ನಿನ್ನ ದಾಸಿಯ ಮಾತನ್ನು ಕೇಳಿ, ನೀನು ಮಾರ್ಗ ಹಿಡಿದು ನಡೆಯುವಾಗ ನಿನಗೆ ಶಕ್ತಿ ಇರುವ ಹಾಗೆ ನಾನು ನಿನಗೆ ಕೊಡುವ ಆಹಾರವನ್ನು ಊಟಮಾಡು,” ಎಂದಳು.</verse>
				<verse number="23">ಅದಕ್ಕವನು, “ನಾನು ತಿನ್ನುವುದಿಲ್ಲ,” ಎಂದನು. ಆದರೆ ಅವನ ದಾಸರೂ, ಆ ಸ್ತ್ರೀಯೂ ಅವನನ್ನು ಬಲವಂತ ಮಾಡಿದ್ದರಿಂದ, ಅವನು ಅವರ ಮಾತನ್ನು ಕೇಳಿ, ನೆಲವನ್ನು ಬಿಟ್ಟು ಎದ್ದು, ಮಂಚದ ಮೇಲೆ ಕುಳಿತುಕೊಂಡನು.</verse>
				<verse number="24">ಆ ಸ್ತ್ರೀಯ ಮನೆಯಲ್ಲಿ ಒಂದು ಕೊಬ್ಬಿದ ಕರುವು ಇತ್ತು. ಅವಳು ಅದನ್ನು ತ್ವರೆಯಾಗಿ ಕೊಯ್ದು, ಹಿಟ್ಟನ್ನು ನಾದಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು,</verse>
				<verse number="25">ಸೌಲನ ಮುಂದೆ ಮತ್ತು ಅವನ ದಾಸರ ಮುಂದೆ ತಂದಿಟ್ಟಳು. ಅವರು ಊಟಮಾಡಿ ಆ ರಾತ್ರಿಯಲ್ಲೇ ಹೊರಟು ಹೋದರು.</verse>
			</chapter>
			<chapter number="29">
				<verse number="1">ಫಿಲಿಷ್ಟಿಯರು ತಮ್ಮ ಸಮಸ್ತ ಸೈನ್ಯಗಳನ್ನು ಅಫೇಕದಲ್ಲಿ ಕೂಡಿಸಿಕೊಂಡರು. ಹಾಗೆಯೇ ಇಸ್ರಾಯೇಲರು ಇಜ್ರೆಯೇಲ್ ಎಂಬ ಬುಗ್ಗೆಯ ಬಳಿಯಲ್ಲಿ ದಂಡಿಳಿದರು.</verse>
				<verse number="2">ಫಿಲಿಷ್ಟಿಯರ ಅಧಿಪತಿಗಳು ನೂರು ನೂರಾಗಿಯೂ, ಸಾವಿರ ಸಾವಿರವಾಗಿಯೂ ನಡೆದು ಬಂದರು. ದಾವೀದನೂ, ಅವನ ಜನರೂ ಆಕೀಷನ ಸಂಗಡ ಹಿಂದಿನ ದಂಡಿನಲ್ಲಿ ಬಂದರು.</verse>
				<verse number="3">ಆಗ ಫಿಲಿಷ್ಟಿಯರ ಅಧಿಪತಿಗಳು, “ಈ ಹಿಬ್ರಿಯರು ಏಕೆ?” ಎಂದರು. ಆಕೀಷನು ಫಿಲಿಷ್ಟಿಯರ ಅಧಿಪತಿಗಳಿಗೆ, “ಇಸ್ರಾಯೇಲಿನ ಅರಸನಾದ ಸೌಲನ ದಾಸನಾದ ಈ ದಾವೀದನು ಇಷ್ಟು ದಿವಸಗಳೂ, ಇಷ್ಟು ವರ್ಷಗಳೂ ನನ್ನ ಸಂಗಡ ಇದ್ದಾನೆ? ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿವಸ ಮೊದಲುಗೊಂಡು ಇಂದಿನವರೆಗೂ ನಾನು ಅವನಲ್ಲಿ ಒಂದು ಅಪರಾಧವನ್ನಾದರೂ ಕಂಡುಕೊಳ್ಳಲಿಲ್ಲ,” ಎಂದನು.</verse>
				<verse number="4">ಆದರೆ ಫಿಲಿಷ್ಟಿಯರ ಅಧಿಪತಿಗಳು ಆಕೀಷನ ಮೇಲೆ ಕೋಪಗೊಂಡು ಅವನಿಗೆ, “ಇವನು ಯುದ್ಧದಲ್ಲಿ ನಮಗೆ ಶತ್ರುವಾಗಿರದಂತೆ, ಯುದ್ಧಕ್ಕೆ ನಮ್ಮ ಸಂಗಡ ಇವನನ್ನು ಬರಗೊಡದೆ, ನೀನು ಅವನಿಗೆ ನೇಮಿಸಿದ ಸ್ಥಳಕ್ಕೆ ತಿರುಗಿ ಹೋಗುವಹಾಗೆ ಅವನನ್ನು ಕಳುಹಿಸಿಬಿಡು. ಏಕೆಂದರೆ ಇವನು ಯಾವುದರಿಂದ ತನ್ನ ಯಜಮಾನನ ಮೆಚ್ಚಿಗೆ ಪಡೆದುಕೊಳ್ಳುವನು. ಅದು ಈ ಮನುಷ್ಯರ ತಲೆಗಳಿಂದಲ್ಲವೇ?</verse>
				<verse number="5">ಸ್ತ್ರೀಯರು ತಮ್ಮ ನೃತ್ಯಗಳಲ್ಲಿ ಹಾಡಿದ ದಾವೀದನು ಇವನಲ್ಲವೇ: “ ‘ಸೌಲನು ಸಾವಿರ ಜನರನ್ನೂ, ದಾವೀದನು ಹತ್ತು ಸಾವಿರ ಜನರನ್ನೂ ಹೊಡೆದನು.’ ”</verse>
				<verse number="6">ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ, “ನಿಜವಾಗಿಯೂ ಯೆಹೋವ ದೇವರಾಣೆ, ನೀನು ಯಥಾರ್ಥನು, ನೀನು ನನ್ನ ಸಂಗಡ ದಂಡಿನಲ್ಲಿ ಹೋಗುತ್ತಾ ಬರುತ್ತಾ ಇರುವುದು ನನ್ನ ದೃಷ್ಟಿಗೆ ಒಳ್ಳೆಯದು. ನೀನು ನನ್ನ ಬಳಿಗೆ ಬಂದ ದಿನದಿಂದ ಈವರೆಗೂ ನಿನ್ನಲ್ಲಿ ಕೆಟ್ಟದ್ದನ್ನು ಕಂಡಿಲ್ಲ. ಆದರೆ ಈಗ ನೀನು ಅಧಿಪತಿಗಳ ದೃಷ್ಟಿಗೆ ಒಳ್ಳೆಯವನಲ್ಲ.</verse>
				<verse number="7">ಆದ್ದರಿಂದ ನೀನು ಫಿಲಿಷ್ಟಿಯರ ಅಧಿಪತಿಗಳ ದೃಷ್ಟಿಗೆ ಮೆಚ್ಚಿಗೆ ಇಲ್ಲದ್ದರಿಂದ ಈಗ ಸಮಾಧಾನವಾಗಿ ಹಿಂದಕ್ಕೆ ನಿನ್ನ ಸ್ಥಳಕ್ಕೆ ಹೋಗು,” ಎಂದನು.</verse>
				<verse number="8">ದಾವೀದನು ಆಕೀಷನಿಗೆ, “ನನ್ನ ಯಜಮಾನನಾದ ಅರಸನ ಶತ್ರುಗಳ ಸಂಗಡ ಯುದ್ಧಮಾಡಲು ಹೋಗದ ಹಾಗೆ ನಾನೇನು ಮಾಡಿದೆನು? ನಿನ್ನ ದಾಸನು ನಿನ್ನ ಬಳಿಗೆ ಬಂದಂದಿನಿಂದ ಈ ದಿನದವರೆಗೂ ನನ್ನಲ್ಲಿ ಏನು ಕಂಡುಕೊಂಡಿ?” ಎಂದನು.</verse>
				<verse number="9">ಆಕೀಷನು ದಾವೀದನಿಗೆ ಉತ್ತರವಾಗಿ, “ನೀನು ನನ್ನ ದೃಷ್ಟಿಯಲ್ಲಿ ಒಬ್ಬ ದೇವದೂತನ ಹಾಗೆಯೇ ಉತ್ತಮನಾಗಿದ್ದೀ ಎಂದು ನಾನು ಬಲ್ಲೆನು. ಆದರೆ, ‘ಯುದ್ಧಕ್ಕೆ ಇವನು ನಮ್ಮ ಸಂಗಡ ಬರಬಾರದು,’ ಎಂದು ಫಿಲಿಷ್ಟಿಯರ ಅಧಿಪತಿಗಳು ಹೇಳಿದ್ದಾರೆ.</verse>
				<verse number="10">ಆದ್ದರಿಂದ ನಾಳೆ ಉದಯಕ್ಕೆ ಎದ್ದು ನಿನ್ನ ಸಂಗಡ ಬಂದ ನಿನ್ನ ಯಜಮಾನನ ಸೇವಕರನ್ನು ಕರಕೊಂಡು, ಅವರ ಸಂಗಡ ಉದಯದಲ್ಲಿ ಬೆಳಕು ಆಗುವಾಗ ಹೊರಟು ಹೋಗು,” ಎಂದನು.</verse>
				<verse number="11">ಹಾಗೆಯೇ ದಾವೀದನೂ, ಅವನು ಜನರೂ ಉದಯದಲ್ಲಿ ಫಿಲಿಷ್ಟಿಯರ ದೇಶಕ್ಕೆ ತಿರುಗಿ ಹೋಗಲು ಮುಂಜಾನೆ ಎದ್ದರು. ಫಿಲಿಷ್ಟಿಯರು ಇಜ್ರೆಯೇಲ್ ಎಂಬ ಪಟ್ಟಣಕ್ಕೆ ಹೊರಟು ಹೋದರು.</verse>
			</chapter>
			<chapter number="30">
				<verse number="1">ದಾವೀದನೂ, ಅವನ ಜನರೂ ಮೂರನೆಯ ದಿವಸದಲ್ಲಿ ಚಿಕ್ಲಗ್ ಊರಿಗೆ ಬಂದು ಸೇರಿದರು. ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ, ಚಿಕ್ಲಗಿನ ಮೇಲೆಯೂ ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟರು.</verse>
				<verse number="2">ಅದರಲ್ಲಿದ್ದ ಸ್ತ್ರೀಯರನ್ನು ಸೆರೆಹಿಡಿದು ಹಿರಿಯರನ್ನಾದರೂ, ಕಿರಿಯರನ್ನಾದರೂ ಕೊಂದುಹಾಕದೆ, ಅವರನ್ನು ಸೆರೆಯಾಗಿ ತೆಗೆದುಕೊಂಡು, ತಮ್ಮ ಮಾರ್ಗವಾಗಿ ಹೊರಟು ಹೋದರು.</verse>
				<verse number="3">ದಾವೀದನೂ, ಅವನ ಜನರೂ ಆ ಪಟ್ಟಣಕ್ಕೆ ಬಂದಾಗ, ಅದು ಬೆಂಕಿಯಿಂದ ಸುಟ್ಟುಹೋಗಿರುವುದನ್ನೂ ಮತ್ತು ಆ ಜನರ ಹೆಂಡತಿಯರೂ ಅವರ ಪುತ್ರ ಪುತ್ರಿಯರೂ ಸೆರೆಯಾಗಿ ಹೋಗಿರುವುದನ್ನೂ ಕಂಡರು.</verse>
				<verse number="4">ಆಗ ದಾವೀದನೂ, ಅವನ ಸಂಗಡ ಇದ್ದ ಜನರೂ ಅಳುವುದಕ್ಕೆ ತಮ್ಮಲ್ಲಿ ಶಕ್ತಿಯಿಲ್ಲದೆ ಹೋಗುವವರೆಗೂ ತಮ್ಮ ಸ್ವರವನ್ನೆತ್ತಿ ಅತ್ತರು.</verse>
				<verse number="5">ದಾವೀದನ ಇಬ್ಬರು ಹೆಂಡತಿಯರಾಗಿದ್ದ ಇಜ್ರೆಯೇಲಿನವಳಾದ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ವಿಧವೆಯಾಗಿದ್ದ ಅಬೀಗೈಲಳು ಸೆರೆಯಾಗಿ ಹೋಗಿದ್ದರು.</verse>
				<verse number="6">ಜನರೆಲ್ಲರೂ ಪ್ರತಿಯೊಬ್ಬನು ತನ್ನ ಪುತ್ರಪುತ್ರಿಯರಿಗೋಸ್ಕರವಾಗಿಯೂ ಮನೋವ್ಯಥೆಪಟ್ಟು, ದಾವೀದನನ್ನು ಕಲ್ಲೆಸೆಯಬೇಕೆಂದು ಹೇಳಿಕೊಂಡದ್ದರಿಂದ, ಅವನು ಬಹಳ ಇಕ್ಕಟ್ಟಿನಲ್ಲಿ ಸಿಕ್ಕಿಕೊಂಡಿದ್ದನು. ಆದರೂ ದಾವೀದನು ಯೆಹೋವ ದೇವರಲ್ಲಿ ತನ್ನನ್ನು ಬಲಪಡಿಸಿಕೊಂಡನು.</verse>
				<verse number="7">ಆಗ ದಾವೀದನು ಅಹೀಮೆಲೆಕನ ಮಗ ಅಬಿಯಾತರನೆಂಬ ಯಾಜಕನಿಗೆ, “ನೀನು ದಯಮಾಡಿ ಏಫೋದನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದನು. ಹಾಗೆಯೇ ಅಬ್ಯತಾರನು ಏಫೋದನ್ನು ದಾವೀದನ ಬಳಿಗೆ ತಂದನು.</verse>
				<verse number="8">ದಾವೀದನು ಯೆಹೋವ ದೇವರಿಗೆ, “ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ಅವರು ನನಗೆ ವಶವಾಗುವರೋ?” ಎಂದು ಕೇಳಿದನು. ಅದಕ್ಕೆ ಯೆಹೋವ ದೇವರು, “ಬೆನ್ನಟ್ಟು, ಅವರು ನಿನ್ನ ವಶವಾಗುವರು; ನೀನು ನಿನ್ನವರನ್ನು ಬಿಡಿಸಿಕೊಂಡು ಬರುವೆ,” ಎಂದರು.</verse>
				<verse number="9">ಆಗ ದಾವೀದನೂ, ಅವನ ಸಂಗಡ ಇದ್ದ ಆರುನೂರು ಜನರೂ ಹೋದರು. ಅವರು ಬೆಸೋರ್ ಎಂಬ ಹಳ್ಳದ ಬಳಿಗೆ ಬಂದಾಗ, ಹಿಂದುಳಿದವರು ಅಲ್ಲಿಯೇ ನಿಂತರು.</verse>
				<verse number="10">ದಾವೀದನು ತಾನೂ, ನಾನೂರು ಜನರೂ ಹಿಂದಟ್ಟಿ ಹೋದರು. ಬೆಸೋರಿನ ಹಳ್ಳವನ್ನು ದಾಟಲಾರದೆ ದಣಿದಿದ್ದರಿಂದ, ಇನ್ನೂರು ಜನರು ಅಲ್ಲಿ ನಿಂತರು.</verse>
				<verse number="11">ಅವನ ಜನರು ಒಬ್ಬ ಈಜಿಪ್ಟಿನವನು ಅಡವಿಯಲ್ಲಿ ಬಿದ್ದಿರುವುದನ್ನು ಕಂಡು, ಅವನನ್ನು ದಾವೀದನ ಬಳಿಗೆ ತಂದು, ಅವನಿಗೆ ರೊಟ್ಟಿ ಕೊಟ್ಟರು. ಅವನು ತಿಂದನು.</verse>
				<verse number="12">ಅವನಿಗೆ ನೀರನ್ನು ಕುಡಿಸಿ, ಅಂಜೂರ ಹಣ್ಣಿನ ಉಂಡೆಯನ್ನೂ, ಒಣಗಿದ ಎರಡು ದ್ರಾಕ್ಷಿ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದಾಗ ಚೇತರಿಸಿಕೊಂಡನು. ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.</verse>
				<verse number="13">ದಾವೀದನು ಅವನನ್ನು, “ನೀನು ಯಾರ ಕಡೆಯವನು? ನೀನು ಎಲ್ಲಿಯವನು?” ಎಂದು ಕೇಳಿದನು. ಅವನು, “ನಾನು ಈಜಿಪ್ಟಿನವನು, ಒಬ್ಬ ಅಮಾಲೇಕ್ಯನ ಸೇವಕನು. ಮೂರು ದಿನಗಳಿಂದ ನಾನು ರೋಗದಲ್ಲಿ ಬಿದ್ದುದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.</verse>
				<verse number="14">ನಾವು ಕೆರೇತ್ಯರ ದಕ್ಷಿಣ ಪ್ರಾಂತದ ಮೇಲೆಯೂ, ಯೆಹೂದದ ಮೇರೆಯ ಮೇಲೆಯೂ, ಕಾಲೇಬನ ದಕ್ಷಿಣ ಪ್ರಾಂತದ ಮೇಲೆಯೂ ದಾಳಿಮಾಡಿ, ಚಿಕ್ಲಗ್ ಊರನ್ನು ಬೆಂಕಿಯಿಂದ ಸುಟ್ಟುಬಿಟ್ಟೆವು,” ಎಂದನು.</verse>
				<verse number="15">ದಾವೀದನು ಅವನಿಗೆ, “ನೀನು ನನ್ನನ್ನು ಆ ಗುಂಪಿನ ಬಳಿಗೆ ಕರೆದುಕೊಂಡು ಹೋಗುತ್ತೀಯಾ?” ಎಂದು ಕೇಳಿದನು. ಅದಕ್ಕವನು, “ನೀನು ನನ್ನನ್ನು ಕೊಂದುಹಾಕುವುದಿಲ್ಲ ಇಲ್ಲವೆ ನನ್ನನ್ನು ನನ್ನ ಯಜಮಾನನ ಕೈಯಲ್ಲಿ ಒಪ್ಪಿಸಿಕೊಡುವುದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಮಾಡಿದರೆ, ನಿನ್ನನ್ನು ಅಲ್ಲಿಗೆ ಕರೆದುಕೊಂಡು ಹೋಗುತ್ತೇನೆ,” ಎಂದನು.</verse>
				<verse number="16">ಇವನು ದಾವೀದನನ್ನು ಕರೆದುಕೊಂಡು ಅಲ್ಲಿಗೆ ಹೋದಾಗ, ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶದಲ್ಲಿಯೂ, ಯೆಹೂದ ದೇಶದಲ್ಲಿಯೂ ವ್ಯಾಪಿಸಿಕೊಂಡು, ಸಮಸ್ತ ಕೊಳ್ಳೆ ತೆಗೆದುಕೊಂಡು ಬಂದುದರಿಂದ, ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು.</verse>
				<verse number="17">ಆಗ ದಾವೀದನು ಅವರ ಮೇಲೆ ಬೆಳಗಿನಜಾವದಿಂದ ಮಾರನೆಯ ದಿವಸದ ಸಾಯಂಕಾಲದವರೆಗೂ ದಾಳಿಮಾಡುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿ ಹೋದ ನಾನೂರು ಮಂದಿ ಯುವಜನರ ಹೊರತು ಒಬ್ಬನಾದರೂ ತಪ್ಪಿಸಿಕೊಳ್ಳಲಿಲ್ಲ.</verse>
				<verse number="18">ಅಮಾಲೇಕ್ಯರು ತೆಗೆದುಕೊಂಡು ಹೋದದ್ದನ್ನೆಲ್ಲವನ್ನೂ ತನ್ನ ಇಬ್ಬರು ಹೆಂಡತಿಯರನ್ನೂ ದಾವೀದನು ಬಿಡಿಸಿಕೊಂಡನು.</verse>
				<verse number="19">ಅವರು ತೆಗೆದುಕೊಂಡು ಹೋದ ಕಿರಿಯರಲ್ಲಾದರೂ, ಹಿರಿಯರಲ್ಲಾದರೂ, ಪುತ್ರರಲ್ಲಾದರೂ, ಪುತ್ರಿಯರಲ್ಲಾದರೂ, ಕೊಳ್ಳೆಯಾದ ಯಾವ ವಸ್ತುಗಳಲ್ಲಾದರೂ ಒಂದೂ ಕಡಿಮೆ ಇಲ್ಲದ ಹಾಗೆ, ದಾವೀದನು ಎಲ್ಲವನ್ನು ತಿರುಗಿ ತೆಗೆದುಕೊಂಡು ಬಂದನು.</verse>
				<verse number="20">ಇದಲ್ಲದೆ ದಾವೀದನು ಶತ್ರುಗಳ ಸಮಸ್ತ ದನಕುರಿಗಳ ಮಂದೆಗಳನ್ನು ತೆಗೆದುಕೊಂಡನು. ಅವನ ಜನರು, “ಇವು ದಾವೀದನ ಕೊಳ್ಳೆ” ಎಂದು ಹೇಳಿ ಅವುಗಳನ್ನು ತಮ್ಮ ಪಶುಗಳ ಮುಂದಾಗಿ ಹೊಡೆದುಕೊಂಡು ಬಂದರು.</verse>
				<verse number="21">ಆದರೆ ದಣಿದಿದ್ದರಿಂದ ದಾವೀದನ ಹಿಂದೆ ಬರಲಾರದೆ ಬೆಸೋರಿನ ಹಳ್ಳದ ಬಳಿಯಲ್ಲಿ ಬಿಟ್ಟುಹೋಗಿದ್ದ ಇನ್ನೂರು ಜನರ ಬಳಿಗೆ ದಾವೀದನು ಬಂದಾಗ, ಅವರು ದಾವೀದನನ್ನೂ, ಅವನ ಸಂಗಡ ಇದ್ದ ಜನರನ್ನೂ ಎದುರುಗೊಳ್ಳಲು ಹೋದರು. ದಾವೀದನು ಆ ಜನರ ಬಳಿಗೆ ಸೇರಿ, ಅವರ ಕ್ಷೇಮಸಮಾಚಾರವನ್ನು ಕೇಳಿದನು.</verse>
				<verse number="22">ಆಗ ದಾವೀದನ ಸಂಗಡ ಬಂದ ಮನುಷ್ಯರಲ್ಲಿ ದುಷ್ಟರಾದ ಕೆಲವರು, “ನಮ್ಮ ಸಂಗಡ ಬಾರದೆ ಇದ್ದುದರಿಂದ, ನಾವು ತೆಗೆದುಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವುದಿಲ್ಲ. ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ, ಮಕ್ಕಳನ್ನು ಮಾತ್ರವೇ ಕರೆದುಕೊಂಡು ಹೋಗಲಿ,” ಎಂದರು.</verse>
				<verse number="23">ಅದಕ್ಕೆ ದಾವೀದನು, “ನನ್ನ ಸಹೋದರರೇ, ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದ ಈ ಗುಂಪನ್ನು ನಮ್ಮ ಕೈಯಲ್ಲಿ ಒಪ್ಪಿಸಿಕೊಟ್ಟ ಯೆಹೋವ ದೇವರು ನಮಗೆ ಕೊಟ್ಟದ್ದಕ್ಕೆ ನೀವು ಹಾಗೆ ಮಾಡಬೇಡಿರಿ. ಈ ಕಾರ್ಯಕ್ಕೋಸ್ಕರ ನಿಮ್ಮ ಮಾತನ್ನು ಯಾರು ಕೇಳುವರು?</verse>
				<verse number="24">ಆದರೆ ಯುದ್ಧಕ್ಕೆ ಹೋದವನ ಪಾಲಿನ ಹಾಗೆಯೇ ಸಲಕರಣೆಗಳ ಬಳಿಯಲ್ಲಿ ಕಾದಿರುವವನಿಗೂ ಪಾಲು ಇರಲಿ. ಅವರವರ ಪಾಲು ಇರಲಿ,” ಎಂದನು.</verse>
				<verse number="25">ಹಾಗೆಯೇ ದಾವೀದನು ಆ ದಿವಸ ಮೊದಲ್ಗೊಂಡು ಇಂದಿನವರೆಗೂ ಇರುವ ಹಾಗೆ ಇಸ್ರಾಯೇಲಿಗೆ ಅದನ್ನು ನಿಯಮವಾಗಿಯೂ, ಕಟ್ಟಳೆಯಾಗಿಯೂ ಮಾಡಿದನು.</verse>
				<verse number="26">ದಾವೀದನು ಚಿಕ್ಲಗನ್ನು ತಲುಪಿದಾಗ ಕೊಳ್ಳೆಯಿಂದ ತಂದದ್ದರಲ್ಲಿ ಒಂದು ಭಾಗವನ್ನು ತನ್ನ ಸ್ನೇಹಿತರಾದ ಯೆಹೂದದ ಹಿರಿಯರಿಗೆ ಕಳುಹಿಸಿದನು. “ಯೆಹೋವ ದೇವರ ವೈರಿಗಳಿಂದ ಕೊಳ್ಳೆ ಹೊಡೆದದ್ದರಿಂದ ಈ ಬಹುಮಾನ ನಿಮಗಾಗಿದೆ,” ಎಂದು ಹೇಳಿದನು.</verse>
				<verse number="27">ಹೀಗೆ ದಾವೀದನು ಬೇತೇಲಿನವರು, ನೆಗೆಬನ ರಾಮೋತನವರು ಹಾಗೂ ಯತ್ತೀರಿನವರು,</verse>
				<verse number="28">ಅರೋಯೇರಿನವರು, ಸಿಪ್ಮೋತಿನವರು, ಎಷ್ಟೆಮೋವದವರು,</verse>
				<verse number="29">ರಾಕಾಲಿನವರು, ಯೆರಹ್ಮೇಲ್ಯರು, ಕೇನ್ಯರು,</verse>
				<verse number="30">ಹೊರ್ಮಾದವರು, ಬೋರಾಷಾನಿನವರು, ಅತಾಕಿನವರು,</verse>
				<verse number="31">ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳದವರಿಗೂ ಬಹುಮಾನಗಳನ್ನು ಕಳುಹಿಸಿಕೊಟ್ಟನು.</verse>
			</chapter>
			<chapter number="31">
				<verse number="1">ಫಿಲಿಷ್ಟಿಯರು ಇಸ್ರಾಯೇಲರ ವಿರುದ್ಧ ಯುದ್ಧಮಾಡಿದರು. ಆಗ ಇಸ್ರಾಯೇಲರು ಫಿಲಿಷ್ಟಿಯರಿಂದ ಸೋತು ಓಡಿಹೋಗಿ, ಗಿಲ್ಬೋವ ಬೆಟ್ಟದಲ್ಲಿ ಹತರಾದರು.</verse>
				<verse number="2">ಫಿಲಿಷ್ಟಿಯರು ಸೌಲನನ್ನೂ, ಅವನ ಪುತ್ರರನ್ನೂ ಬಿಡದೆ ಬೆನ್ನಟ್ಟಿ, ಸೌಲನ ಪುತ್ರರಾದ ಯೋನಾತಾನನನ್ನೂ, ಅಬೀನಾದಾಬನನ್ನೂ, ಮಲ್ಕೀಷೂವನನ್ನೂ ಕೊಂದುಬಿಟ್ಟರು.</verse>
				<verse number="3">ಇದಲ್ಲದೆ ಯುದ್ಧವು ಸೌಲನಿದ್ದ ಕಡೆಯಲ್ಲಿ ಬಹುಘೋರವಾಗಿತ್ತು. ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದಾಗ ಅವನು ತೀವ್ರವಾಗಿ ಗಾಯಗೊಂಡನು.</verse>
				<verse number="4">ಆದಕಾರಣ ಅವನು ತನ್ನ ಆಯುಧಗಳನ್ನು ಹೊರುವವನಿಗೆ, “ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅವಮಾನ ಮಾಡದ ಹಾಗೆ ನೀನು ನಿನ್ನ ಖಡ್ಗವನ್ನು ಹಿರಿದು, ನನ್ನನ್ನು ತಿವಿ,” ಎಂದನು. ಆದರೆ ಅವನ ಆಯುಧ ಹೊರುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಖಡ್ಗವನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.</verse>
				<verse number="5">ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹೊರುವವನು ಕಂಡಾಗ, ಅವನೂ ತನ್ನ ಖಡ್ಗದ ಮೇಲೆ ಬಿದ್ದು, ಅವನ ಸಂಗಡ ಸತ್ತನು.</verse>
				<verse number="6">ಹೀಗೆ ಸೌಲನೂ, ಅವನ ಮೂರು ಮಂದಿ ಪುತ್ರರೂ, ಅವನ ಆಯುಧ ಹೊರುವವನೂ, ಅವನ ಸಮಸ್ತ ಜನರೂ ಅದೇ ದಿನ ಸತ್ತರು.</verse>
				<verse number="7">ಇಸ್ರಾಯೇಲರ ಸೈನಿಕರು ಸೋತು ಹೋದರೆಂದೂ, ಸೌಲನೂ, ಅವನ ಪುತ್ರರೂ ಸತ್ತರೆಂದೂ, ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲರು ಕಂಡಾಗ, ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.</verse>
				<verse number="8">ಮಾರನೆಯ ದಿವಸದಲ್ಲಿ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳಲು ಬಂದಾಗ, ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವ ಸೌಲನನ್ನೂ, ಅವನ ಮೂವರು ಪುತ್ರರನ್ನೂ ಕಂಡರು.</verse>
				<verse number="9">ಅವರು ಅವನ ತಲೆಯನ್ನು ಕಡಿದು, ಅವನ ಆಯುಧಗಳನ್ನು ತೆಗೆದುಕೊಂಡು, ತಮ್ಮ ವಿಗ್ರಹಗಳ ಮಂದಿರಗಳಿಗೂ, ಜನರಿಗೂ ಜಯವಾರ್ತೆಯನ್ನು ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿಸಿದರು.</verse>
				<verse number="10">ಸೌಲನ ಆಯುಧಗಳನ್ನು ಅಷ್ಟೋರೆತ್ ಮಂದಿರದಲ್ಲಿ ಇಟ್ಟು, ಅವನ ಶವವನ್ನು ಬೇತ್ ಷೆಯಾನಿನ ಕೋಟೆಯ ಗೋಡೆಗೆ ನೇತುಹಾಕಿದರು.</verse>
				<verse number="11">ಫಿಲಿಷ್ಟಿಯರು ಸೌಲನಿಗೆ ಮಾಡಿದ್ದನ್ನೆಲ್ಲಾ ಯಾಬೇಷ್ ಗಿಲ್ಯಾದಿನವರೆಲ್ಲರು ಕೇಳಿದಾಗ,</verse>
				<verse number="12">ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು, ರಾತ್ರಿಯೆಲ್ಲಾ ನಡೆದುಹೋಗಿ, ಬೇತ್ ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶವವನ್ನೂ, ಅವನ ಪುತ್ರರ ಶವಗಳನ್ನೂ ತೆಗೆದುಕೊಂಡು ಯಾಬೇಷಿಗೆ ಬಂದು, ಅವುಗಳನ್ನು ಅಲ್ಲಿ ದಹಿಸಿದರು.</verse>
				<verse number="13">ಅವರ ಎಲುಬುಗಳನ್ನು ತೆಗೆದುಕೊಂಡು, ಅವುಗಳನ್ನು ಯಾಬೇಷಿನಲ್ಲಿರುವ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿವಸ ಉಪವಾಸ ಮಾಡಿದರು.</verse>
			</chapter>
		</book>
		<book number="10">
			<chapter number="1">
				<verse number="1">ಸೌಲನ ಮರಣದ ತರುವಾಯ ದಾವೀದನು ಅಮಾಲೇಕ್ಯರನ್ನು ಸಂಹರಿಸಿ, ಚಿಕ್ಲಗಿಗೆ ತಿರುಗಿಬಂದು, ಎರಡು ದಿವಸ ಅಲ್ಲಿ ಇದ್ದ ತರುವಾಯ,</verse>
				<verse number="2">ಮೂರನೆಯ ದಿನದಲ್ಲಿ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಸೌಲನ ಪಾಳೆಯದಿಂದ ಹೊರಟು ದಾವೀದನ ಬಳಿಗೆ ಬಂದು, ನೆಲದ ಮಟ್ಟಿಗೂ ಬಾಗಿ ನಮಸ್ಕರಿಸಿದನು.</verse>
				<verse number="3">ದಾವೀದನು ಅವನಿಗೆ, “ನೀನು ಎಲ್ಲಿಂದ ಬಂದೆ?” ಎಂದನು. ಅದಕ್ಕವನು, “ಇಸ್ರಾಯೇಲಿನ ಪಾಳೆಯದಿಂದ ತಪ್ಪಿಸಿಕೊಂಡು ಬಂದೆನು,” ಎಂದನು.</verse>
				<verse number="4">ದಾವೀದನು ಅವನಿಗೆ, “ನಡೆದ ವರ್ತಮಾನವೇನು? ನೀನು ನನಗೆ ತಿಳಿಸು,” ಎಂದನು. ಅವನು, “ಜನರು ಯುದ್ಧದಿಂದ ಓಡಿಹೋದರು. ಜನರಲ್ಲಿ ಅನೇಕರು ಸತ್ತರು. ಸೌಲನೂ, ಅವನ ಮಗ ಯೋನಾತಾನನೂ ಸತ್ತರು,” ಎಂದನು.</verse>
				<verse number="5">ದಾವೀದನು ತನಗೆ ವರ್ತಮಾನ ಹೇಳಿದ ಯುವಕನಿಗೆ, “ಸೌಲನೂ, ಅವನ ಮಗ ಯೋನಾತಾನನೂ ಸತ್ತರೆಂದು ನಿನಗೆ ಹೇಗೆ ತಿಳಿಯಿತು?” ಎಂದು ಪ್ರಶ್ನಿಸಿದನು.</verse>
				<verse number="6">ಆಗ ಅವನು, “ನಾನು ಅಕಸ್ಮಾತ್ತಾಗಿ ಗಿಲ್ಬೋವ ಬೆಟ್ಟಕ್ಕೆ ಹೋಗಿದ್ದೆನು. ಅಲ್ಲಿ ಸೌಲನು ತನ್ನ ಈಟಿಯನ್ನು ಊರಿಕೊಂಡು ನಿಂತಿದ್ದನು. ಆಗ ರಥಗಳೂ ರಾಹುತರೂ ಅವನನ್ನು ಹಿಂದಟ್ಟಿಕೊಂಡೇ ಇದ್ದರು.</verse>
				<verse number="7">ಅವನು ಹಿಂದಕ್ಕೆ ತಿರುಗಿ ನೋಡಿ, ನನ್ನನ್ನು ಕಂಡು ಕರೆದನು. ಆಗ ನಾನು, ‘ಇದ್ದೇನೆ,’ ಎಂದೆನು.</verse>
				<verse number="8">“ಆಗ ಅವನು, ‘ನೀನ್ಯಾರು?’ ಎಂದು ಕೇಳಿದನು. “ ‘ನಾನು ಒಬ್ಬ ಅಮಾಲೇಕ್ಯನು,’ ಎಂದು ಉತ್ತರಕೊಟ್ಟೆನು.</verse>
				<verse number="9">“ಅವನು ನನಗೆ, ‘ನೀನು ದಯಮಾಡಿ ನನ್ನ ಮೇಲೆ ನಿಂತು ನನ್ನನ್ನು ಕೊಂದುಹಾಕು. ಏಕೆಂದರೆ ನನ್ನ ಪ್ರಾಣವು ಇನ್ನೂ ನನ್ನಲ್ಲಿ ಪೂರ್ಣವಾಗಿರುವುದರಿಂದ ಸಂಕಟವು ನನ್ನನ್ನು ಹಿಡಿದಿದೆ,’ ಎಂದನು.</verse>
				<verse number="10">“ಆದ್ದರಿಂದ ಅವನು ಬಿದ್ದ ತರುವಾಯ ಬದುಕಲಾರನೆಂದು ನಾನು ತಿಳಿದು, ಅವನ ಮೇಲೆ ನಿಂತು ಅವನನ್ನು ಕೊಂದುಹಾಕಿದೆನು. ಅವನ ತಲೆಯ ಮೇಲಿದ್ದ ಕಿರೀಟವನ್ನೂ ಅವನ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು, ಅವುಗಳನ್ನು ನನ್ನ ಒಡೆಯನಿಗೆ ಇಲ್ಲಿ ತಂದಿದ್ದೇನೆ,” ಎಂದನು.</verse>
				<verse number="11">ಆಗ ದಾವೀದನೂ, ಅವನ ಸಂಗಡ ಇದ್ದ ಸಮಸ್ತ ಜನರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು,</verse>
				<verse number="12">ಸೌಲನೂ, ಅವನ ಮಗನಾದ ಯೋನಾತಾನನೂ ಇಸ್ರಾಯೇಲಿನ ಮನೆಯವರೂ ಯೆಹೋವ ದೇವರ ಜನರೂ ಖಡ್ಗದಿಂದ ಬಿದ್ದ ಕಾರಣ, ಅವರಿಗೋಸ್ಕರ ಗೋಳಾಡಿ ಅತ್ತು, ಅಸ್ತಮಾನದವರೆಗೂ ಉಪವಾಸವಾಗಿದ್ದರು.</verse>
				<verse number="13">ದಾವೀದನು ತನಗೆ ವರ್ತಮಾನ ತಿಳಿಸಿದ ಯುವಕನನ್ನು, “ನೀನು ಎಲ್ಲಿಯವನು?” ಎಂದು ಕೇಳಿದನು. ಅವನು, “ನಾನು ವಿದೇಶಿಯ ಮಗನಾದ ಅಮಾಲೇಕ್ಯನು,” ಎಂದನು.</verse>
				<verse number="14">ಆಗ ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಸಂಹರಿಸಲು ನಿನ್ನ ಕೈ ಎತ್ತುವುದಕ್ಕೆ ಯಾಕೆ ಭಯಪಡಲಿಲ್ಲ?” ಎಂದು ಕೇಳಿದನು.</verse>
				<verse number="15">ಯುವಕರಲ್ಲಿ ಒಬ್ಬನನ್ನು ಕರೆದು, “ನೀನು ಇವನನ್ನು ಕೊಲ್ಲು,” ಎಂದನು. ಹಾಗೆಯೇ ಅವನು ಅವನನ್ನು ಹೊಡೆದು ಕೊಂದನು.</verse>
				<verse number="16">ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿದ್ದರಿಂದ, ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ,” ಎಂದನು.</verse>
				<verse number="17">ಆಗ ದಾವೀದನು ಸೌಲನ ಮೇಲೆಯೂ, ಅವನ ಮಗ ಯೋನಾತಾನನ ಮೇಲೆಯೂ ಶೋಕದಿಂದ ಈ ಗೀತೆ ಹಾಡಿ ಗೋಳಾಡಿದನು.</verse>
				<verse number="18">ಇದಲ್ಲದೆ ದಾವೀದನು ಬಿಲ್ಲೆ ಎಂಬ ಗೀತೆಯನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಹೇಳಿದನು. ಇದು ಯಾಷಾರನ ಗ್ರಂಥದಲ್ಲಿ ಬರೆಯಲಾಗಿದೆ:</verse>
				<verse number="19">“ಇಸ್ರಾಯೇಲೇ, ನಿನ್ನ ಮಹಿಮೆಯು ನಿನ್ನ ಬೆಟ್ಟಗಳ ಮೇಲೆ ಕೊಲೆಯಾಗಿ ಬಿದ್ದಿದೆ. ಪರಾಕ್ರಮಶಾಲಿಗಳು ಹೇಗೆ ಬಿದ್ದರು!</verse>
				<verse number="20">“ಗತ್ ಊರಿನಲ್ಲಿ ಇದನ್ನು ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಪುತ್ರಿಯರು ಸಂತೋಷಪಡಬಾರದು; ಸುನ್ನತಿ ಇಲ್ಲದವರ ಪುತ್ರಿಯರು ಉತ್ಸಾಹಪಡಬಾರದು.</verse>
				<verse number="21">“ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಬೀಳದೆ ಇರಲಿ, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಯೂ ಅವಮಾನಗೊಂಡು ಬಿದ್ದವು. ಸೌಲನ ಗುರಾಣಿಯೂ ಎಣ್ಣೆಯಿಂದ ಅಭಿಷಿಕ್ತನಲ್ಲದವನ ಗುರಾಣಿಯಂತೆ ಆಯಿತು.</verse>
				<verse number="22">“ಹತರಾದವರ ರಕ್ತದಿಂದಲೂ, ಯೋನಾತಾನನ ಬಿಲ್ಲು ಹಿಂದಕ್ಕೆ ತಿರುಗಲಿಲ್ಲ. ಸೌಲನ ಖಡ್ಗ ತೃಪ್ತಿಗೊಳ್ಳದೆ ತಿರುಗಿ ಬರಲಿಲ್ಲ.</verse>
				<verse number="23">ಸೌಲನೂ ಯೋನಾತಾನನೂ ಜೀವದಿಂದಿದ್ದಾಗ ಪ್ರಿಯಕರವಾಗಿಯೂ, ಸಂತೋಷಕರವಾಗಿಯೂ ಇದ್ದರು. ತಮ್ಮ ಮರಣದಲ್ಲಿಯೂ ಅಗಲಿ ಹೋಗದೆ ಇದ್ದರು. ಅವರು ಹದ್ದುಗಳಿಗಿಂತ ವೇಗವುಳ್ಳವರೂ, ಸಿಂಹಗಳಿಗಿಂತ ಬಲವುಳ್ಳವರೂ ಆಗಿದ್ದರು.</verse>
				<verse number="24">“ಇಸ್ರಾಯೇಲಿನ ಪುತ್ರಿಯರೇ, ಸೌಲನಿಗೋಸ್ಕರ ಅಳಿರಿ. ನಿಮಗೆ ರಕ್ತಾಂಬರವನ್ನು ಸಂಭ್ರಮವಾಗಿ ತೊಡಿಸಿದನಲ್ಲಾ. ನಿಮ್ಮ ಉಡುಗೆಗಳ ಮೇಲೆ ಚಿನ್ನದ ಆಭರಣಗಳನ್ನು ಧರಿಸುವಂತೆ ಮಾಡಿದನಲ್ಲಾ.</verse>
				<verse number="25">“ಹೇಗೆ ಪರಾಕ್ರಮಶಾಲಿಗಳು ಯುದ್ಧದಲ್ಲಿ ಬಿದ್ದಿದ್ದಾರೆ. ಯೋನಾತಾನನೇ, ನೀನು ಉನ್ನತ ಸ್ಥಳಗಳಲ್ಲಿ ಹತನಾಗಿ ಬಿದ್ದಿರುವಿ.</verse>
				<verse number="26">ನನ್ನ ಸಹೋದರನಾದ ಯೋನಾತಾನನೇ, ನಾನು ನಿನಗೋಸ್ಕರ ಶೋಕಿಸುತ್ತೇನೆ. ನೀನು ನನಗೆ ಬಹಳ ಮನೋಹರನಾಗಿದ್ದಿ. ನಿನ್ನ ಪ್ರೀತಿ ನನ್ನ ಮೇಲೆ ಆಶ್ಚರ್ಯಕರವಾಗಿತ್ತು. ಅದು ಸ್ತ್ರೀಯರ ಪ್ರೀತಿಗಿಂತ ಅಧಿಕವಾದದ್ದು.</verse>
				<verse number="27">“ಹೇಗೆ ಪರಾಕ್ರಮಶಾಲಿಗಳು ಯುದ್ಧದಲ್ಲಿ ಬಿದ್ದಿದ್ದಾರೆ. ಯುದ್ಧದ ಆಯುಧಗಳು ನಾಶವಾಗಿ ಹೋದವಲ್ಲಾ.”</verse>
			</chapter>
			<chapter number="2">
				<verse number="1">ಇದಾದ ಮೇಲೆ ದಾವೀದನು ಯೆಹೋವ ದೇವರನ್ನು, “ಯೆಹೂದದ ಪಟ್ಟಣಗಳಲ್ಲಿ ಯಾವುದಾದರೊಂದು ಪಟ್ಟಣಕ್ಕೆ ಹೋಗಬಹುದೋ?” ಎಂದು ಕೇಳಿದನು. ಯೆಹೋವ ದೇವರು ಅವನಿಗೆ, “ಹೋಗು,” ಎಂದರು. ಅದಕ್ಕವನು, “ನಾನು ಎಲ್ಲಿಗೆ ಹೋಗಲಿ?” ಎಂದನು. ಅದಕ್ಕೆ ದೇವರು, “ಹೆಬ್ರೋನಿಗೆ,” ಎಂದರು.</verse>
				<verse number="2">ಹಾಗೆಯೇ ದಾವೀದನೂ, ಹಾಗೂ ಅವನ ಇಬ್ಬರು ಹೆಂಡತಿಯರಾದ ಇಜ್ರೆಯೇಲಿನವಳಾಗಿರುವ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ವಿಧವೆಯಾಗಿದ್ದ ಅಬೀಗೈಲಳೂ ಅಲ್ಲಿಗೆ ಹೋದರು.</verse>
				<verse number="3">ಇದಲ್ಲದೆ ದಾವೀದನು ತನ್ನ ಸಂಗಡ ಇದ್ದ ಜನರನ್ನೂ, ಅವರವರ ಮನೆಯವರನ್ನೂ ಕರೆದುಕೊಂಡು ಹೋದನು. ಅವರು ಹೆಬ್ರೋನಿನ ಪಟ್ಟಣಗಳಲ್ಲಿ ವಾಸವಾಗಿದ್ದರು.</verse>
				<verse number="4">ಆಗ ಯೆಹೂದನ ಮನುಷ್ಯರು ಹೆಬ್ರೋನಿಗೆ ಬಂದು ಅಲ್ಲಿ ದಾವೀದನನ್ನು ಯೆಹೂದದವರ ಮೇಲೆ ಅರಸನನ್ನಾಗಿ ಅಭಿಷೇಕ ಮಾಡಿಸಿದರು. ಯಾಬೇಷ್ ಗಿಲ್ಯಾದಿನವರು ಸೌಲನನ್ನು ಸಮಾಧಿಮಾಡಿದರೆಂದು ದಾವೀದನಿಗೆ ತಿಳಿಸಿದಾಗ,</verse>
				<verse number="5">ದಾವೀದನು ಯಾಬೇಷ್ ಗಿಲ್ಯಾದಿನವರಿಗೆ ದೂತರನ್ನು ಕಳುಹಿಸಿ, “ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ, ಅವನನ್ನು ಸಮಾಧಿಮಾಡಿದ ಕಾರಣ, ಯೆಹೋವ ದೇವರಿಂದ ನಿಮಗೆ ಆಶೀರ್ವಾದವಾಗಲಿ.</verse>
				<verse number="6">ಈಗ ಯೆಹೋವ ದೇವರು ನಿಮಗೆ ದಯೆಯನ್ನೂ, ನಂಬಿಗಸ್ತಿಕೆಯನ್ನೂ ತೋರಿಸಲಿ. ನೀವು ಈ ಕಾರ್ಯವನ್ನು ಮಾಡಿದ್ದರಿಂದ, ನಾನು ನಿಮಗೆ ಪ್ರತ್ಯುಪಕಾರ ಮಾಡುವೆನು.</verse>
				<verse number="7">ನೀವು ಪರಾಕ್ರಮಶಾಲಿಗಳಾಗಿದ್ದು, ನಿಮ್ಮ ಕೈಗಳು ಬಲವಾಗಿರಲಿ. ಏಕೆಂದರೆ ನಿಮ್ಮ ಯಜಮಾನನಾದ ಸೌಲನು ಮರಣಹೊಂದಿದನು. ಯೆಹೂದನ ಮನೆಯವರು ನನ್ನನ್ನು ತಮ್ಮ ಮೇಲೆ ಅರಸನನ್ನಾಗಿ ಅಭಿಷೇಕ ಮಾಡಿದರು,” ಎಂದನು.</verse>
				<verse number="8">ಸೌಲನ ಸೈನ್ಯಾಧಿಪತಿಯಾದ ನೇರನ ಮಗನಾಗಿರುವ ಅಬ್ನೇರನು ಸೌಲನ ಮಗ ಈಷ್ಬೋಶೆತನನ್ನು ಮಹನಯಿಮಿಗೆ ಕರೆದುಕೊಂಡು ಹೋದನು.</verse>
				<verse number="9">ಅಲ್ಲಿ ಅವನನ್ನು ಗಿಲ್ಯಾದ್, ಅಶೂರ್, ಇಜ್ರೆಯೇಲ್, ಎಫ್ರಾಯೀಮ್, ಬೆನ್ಯಾಮೀನ್ ಜನರ ಮೇಲೆಯೂ, ಇಸ್ರಾಯೇಲರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿದನು.</verse>
				<verse number="10">ಸೌಲನ ಮಗ ಈಷ್ಬೋಶೆತನು ಇಸ್ರಾಯೇಲಿನ ಮೇಲೆ ಆಳುವುದಕ್ಕೆ ಆರಂಭಿಸಿದಾಗ, ನಾಲ್ವತ್ತು ವರ್ಷ ಪ್ರಾಯದವನಾಗಿದ್ದು ಎರಡು ವರ್ಷ ಆಳಿದನು. ಆದರೆ ಯೆಹೂದ ಗೋತ್ರದವರು ದಾವೀದನನ್ನು ಹಿಂಬಾಲಿಸಿದರು.</verse>
				<verse number="11">ದಾವೀದನು ಹೆಬ್ರೋನಿನಲ್ಲಿ ಯೆಹೂದ ಗೋತ್ರದವರ ಮೇಲೆ ಅರಸನಾಗಿದ್ದ ಕಾಲವು ಏಳು ವರ್ಷ ಆರು ತಿಂಗಳು.</verse>
				<verse number="12">ನೇರನ ಮಗನಾಗಿರುವ ಅಬ್ನೇರನೂ, ಸೌಲನ ಮಗ ಈಷ್ಬೋಶೆತನ ಸೇವಕರೂ ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದನು.</verse>
				<verse number="13">ಚೆರೂಯಳ ಮಗ ಯೋವಾಬನೂ, ದಾವೀದನ ಸೇವಕರೂ ಹೊರಟು ಗಿಬ್ಯೋನಿನ ಕೊಳದ ಬಳಿಯಲ್ಲಿ ಕೂಡಿಕೊಂಡರು. ಅವರು ಕೊಳದ ಆಚೆಯಲ್ಲಿಯೂ, ಇವರು ಕೊಳದ ಈಚೆಯಲ್ಲಿಯೂ ಕುಳಿತುಕೊಂಡರು.</verse>
				<verse number="14">ಆಗ ಅಬ್ನೇರನು ಯೋವಾಬನಿಗೆ, “ಕೆಲವು ಜನ ಯುವಕರು ಎದ್ದು ನಮ್ಮ ಮುಂದೆ ಮುಷ್ಠಿ ಯುದ್ಧ ಸ್ಪರ್ಧಿಸಲಿ,” ಎಂದನು. ಅದಕ್ಕೆ ಯೋವಾಬನು, “ಅವರು ಹಾಗೆಯೇ ಮಾಡಲಿ,” ಎಂದನು.</verse>
				<verse number="15">ಆದ್ದರಿಂದ ಸೌಲನ ಮಗ ಈಷ್ಬೋಶೆತನ ಕಡೆಯವನಾದ ಬೆನ್ಯಾಮೀನ್ಯರಲ್ಲಿ ಹನ್ನೆರಡು ಮಂದಿಯೂ, ದಾವೀದನ ಸೇವಕರಲ್ಲಿ ಹನ್ನೆರಡು ಮಂದಿಯೂ ಎದ್ದು ಹೊರಟುಬಂದು,</verse>
				<verse number="16">ಅವರಲ್ಲಿ ಒಬ್ಬರ ಪಕ್ಕೆಯಲ್ಲಿ ಒಬ್ಬರು ಖಡ್ಗವನ್ನು ತಿವಿದುದರಿಂದ ಎಲ್ಲರೂ ಸತ್ತುಬಿದ್ದರು. ಆದ್ದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ “ಹೆಲ್ಕಾತ್ ಹಸ್ಸೂರಿಂ” ಅಂದರೆ, “ಹದಗತ್ತಿ ಕ್ಷೇತ್ರ” ಎಂದು ಹೆಸರಾಯಿತು.</verse>
				<verse number="17">ಇದಲ್ಲದೆ, ಆ ದಿನದಲ್ಲಿ ಘೋರವಾದ ಯುದ್ಧವಾಯಿತು. ಅಬ್ನೇರನೂ, ಇಸ್ರಾಯೇಲರೂ ದಾವೀದನ ಸೇವಕರಿಂದ ಸೋತುಹೋದರು.</verse>
				<verse number="18">ಚೆರೂಯಳ ಮೂವರು ಮಕ್ಕಳಾದ ಯೋವಾಬನೂ, ಅಬೀಷೈಯನೂ, ಅಸಾಯೇಲನೂ ಅಲ್ಲಿ ಇದ್ದರು. ಅಸಾಯೇಲನು ಅಡವಿಯ ಜಿಂಕೆಯ ಹಾಗೆ ಪಾದ ತ್ವರಿತನಾಗಿದ್ದನು.</verse>
				<verse number="19">ಅಸಾಯೇಲನು ಅಬ್ನೇರನನ್ನು ಬಲಗಡೆಗಾದರೂ, ಎಡಗಡೆಗಾದರೂ ತಿರುಗದೆ ಬೆನ್ನಟ್ಟಿದನು.</verse>
				<verse number="20">ಆಗ ಅಬ್ನೇರನು ಹಿಂದಕ್ಕೆ ತಿರುಗಿ ನೋಡಿ, “ನೀನು ಅಸಾಯೇಲನು ಅಲ್ಲವೇ?” ಎಂದನು. ಅದಕ್ಕವನು, “ನಾನೇ,” ಎಂದನು.</verse>
				<verse number="21">ಆಗ ಅಬ್ನೇರನು ಅವನಿಗೆ, “ನೀನು ಬಲಗಡೆಗಾದರೂ, ಎಡಗಡೆಗಾದರೂ ತಿರುಗು. ಯುವಕರಲ್ಲಿ ಒಬ್ಬನನ್ನು ಹಿಡಿದು ಅವನ ಆಯುಧಗಳನ್ನು ತೆಗೆದುಕೋ,” ಎಂದನು. ಆದರೆ ಅಸಾಯೇಲನು ಅವನನ್ನು ಹಿಂಬಾಲಿಸುವುದನ್ನು ಬಿಡಲೇ ಇಲ್ಲ.</verse>
				<verse number="22">ಅಬ್ನೇರನು ಅಸಾಯೇಲನಿಗೆ, “ನನ್ನನ್ನು ಬೆನ್ನಟ್ಟುವುದನ್ನು ಬಿಟ್ಟುಬಿಡು, ನಾನು ಏಕೆ ನಿನ್ನನ್ನು ನೆಲಕ್ಕೆ ಹೊಡೆದು ಕೆಡವಿಬಿಡಬೇಕು? ನಾನು ನಿನ್ನ ಅಣ್ಣನಾದ ಯೋವಾಬನಿಗೆ ಹೇಗೆ ಮುಖ ತೋರಿಸಲಿ?” ಎಂದನು.</verse>
				<verse number="23">ಆದರೆ ಅಸಾಯೇಲನು ಒಪ್ಪದೆ ಹೋದದ್ದರಿಂದ, ಅಬ್ನೇರನು ತನ್ನ ಭರ್ಜಿಯ ಹಿಂಭಾಗದ ಮೊನೆಯಿಂದ ಅವನ ಹೊಟ್ಟೆಯೊಳಗೆ ತಿವಿಯಲು, ಅದು ಅವನ ಬೆನ್ನ ಹೊರಗೆ ತೂರಿ ಬಂತು. ಅವನು ಅಲ್ಲಿ ಬಿದ್ದು, ಅದೇ ಸ್ಥಳದಲ್ಲಿ ಸತ್ತನು. ಅಸಾಯೇಲನು ಬಿದ್ದು ಸತ್ತ ಸ್ಥಳಕ್ಕೆ ಬಂದವರೆಲ್ಲರು ಅಲ್ಲಿಯೇ ಸುಮ್ಮನೆ ನಿಂತರು.</verse>
				<verse number="24">ಆದರೆ ಯೋವಾಬನೂ, ಅಬೀಷೈಯನೂ ಅಬ್ನೇರನನ್ನು ಹಿಂದಟ್ಟಿ, ಸೂರ್ಯ ಆಸ್ತಮಿಸುವವರೆಗೆ ಗಿಬ್ಯೋನಿನ ಮರುಭೂಮಿಯ ಮಾರ್ಗದ ಅಂಚಾದ ಗೀಯಕ್ಕೆ ಎದುರಾಗಿರುವ ಅಮ್ಮಾ ಎಂಬ ಗುಡ್ಡದವರೆಗೆ ಬಂದರು.</verse>
				<verse number="25">ಆಗ ಅಬ್ನೇರನ ಹಿಂದೆ ಬೆನ್ಯಾಮೀನನ ಜನರು ಒಟ್ಟಾಗಿ ಬಂದು ಸೈನ್ಯವಾಗಿ ಕೂಡಿಕೊಂಡು, ಒಂದು ಗುಡ್ಡದ ಶಿಖರದಲ್ಲಿ ನಿಂತಿದ್ದರು.</verse>
				<verse number="26">ಆಗ ಅಬ್ನೇರನು ಯೋವಾಬನಿಗೆ, “ಖಡ್ಗವು ಯಾವಾಗಲೂ ನುಂಗಿ ಬಿಡುವುದೋ? ಅಂತ್ಯದಲ್ಲಿ ಅದು ಕಹಿತನಕ್ಕೆ ನಡೆಸುವುದೆಂದು ನಿನಗೆ ಗೊತ್ತಾಗಲಿಲ್ಲವೋ? ತಮ್ಮ ಸಹೋದರರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಕ್ಕೆ ತಿರುಗುವಂತೆ ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವೆ?” ಎಂದು ಕೂಗಿ ಹೇಳಿದನು.</verse>
				<verse number="27">ಅದಕ್ಕೆ ಯೋವಾಬನು, “ದೇವರ ಜೀವದಾಣೆ, ನೀನು ಮಾತನಾಡದೆ ಹೋದರೆ, ನಿಶ್ಚಯವಾಗಿ ಪ್ರತಿ ಮನುಷ್ಯನು ಉದಯದವರೆಗೆ ತನ್ನ ಸಹೋದರನನ್ನು ಹಿಂದಟ್ಟಿ ಹೋಗುತ್ತಿದ್ದನು,” ಎಂದನು.</verse>
				<verse number="28">ಹೀಗೆ ಯೋವಾಬನು ತುತೂರಿಯನ್ನು ಊದಿದನು. ಆಗ ಸೈನಿಕರೆಲ್ಲರೂ ನಿಂತರು. ಇಸ್ರಾಯೇಲರನ್ನು ಪುನಃ ಹಿಂದಟ್ಟಲಿಲ್ಲ, ಯುದ್ಧವು ನಿಂತಿತು.</verse>
				<verse number="29">ಅಬ್ನೇರನೂ, ಅವನ ಜನರೂ ಆ ರಾತ್ರಿಯೆಲ್ಲಾ ಅರಾಬಾ ಕಣಿವೆಯಲ್ಲಿ ನಡೆದು, ಯೊರ್ದನನ್ನು ದಾಟಿ, ಬಿಥ್ರೋನ್ ಕಣಿವೆಯನ್ನು ಹಾದು ಮಹನಯಿಮಿಗೆ ಬಂದರು.</verse>
				<verse number="30">ಯೋವಾಬನು ಅಬ್ನೇರನ ಹಿಂದಿನಿಂದ ತಿರುಗಿ ಜನರೆಲ್ಲರನ್ನು ಕೂಡಿಸಿಕೊಂಡಾಗ, ದಾವೀದನ ಸೇವಕರಲ್ಲಿ ಹತ್ತೊಂಬತ್ತು ಜನರೂ, ಅಸಾಯೇಲನೂ ಕಡಿಮೆಯಾಗಿದ್ದರು.</verse>
				<verse number="31">ದಾವೀದನ ಸೇವಕರು ಬೆನ್ಯಾಮೀನ್ಯರಲ್ಲಿಯೂ, ಅಬ್ನೇರನ ಜನರಲ್ಲಿಯೂ ಮುನ್ನೂರ ಅರವತ್ತು ಜನರನ್ನು ಹೊಡೆದದ್ದರಿಂದ ಅವರು ಸತ್ತರು.</verse>
				<verse number="32">ಅವರು ಅಸಾಯೇಲನನ್ನು ಎತ್ತಿಕೊಂಡು ಬೇತ್ಲೆಹೇಮಿನಲ್ಲಿರುವ ಅವನ ತಂದೆಯ ಸಮಾಧಿಯಲ್ಲಿ ಹೂಳಿಟ್ಟರು. ಯೋವಾಬನೂ, ಅವನ ಜನರೂ ರಾತ್ರಿಯೆಲ್ಲಾ ನಡೆದು ಉದಯವಾದಾಗ ಹೆಬ್ರೋನಿಗೆ ಬಂದರು.</verse>
			</chapter>
			<chapter number="3">
				<verse number="1">ಸೌಲನ ಕುಟುಂಬದವರಿಗೂ ದಾವೀದನ ಕುಟುಂಬದವರಿಗೂ ಬಹು ದಿವಸ ಯುದ್ಧವು ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಆದರೆ ಸೌಲನ ಕುಟುಂಬದವರು ಬಲಹೀನರಾಗುತ್ತಾ ಹೋದರು.</verse>
				<verse number="2">ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಪುತ್ರರು ಯಾರೆಂದರೆ: ಇಜ್ರೆಯೇಲ್ ಪಟ್ಟಣದ ಅಹೀನೋವಮಳ ಚೊಚ್ಚಲ ಮಗ ಅಮ್ನೋನನು;</verse>
				<verse number="3">ಕರ್ಮೇಲ್ಯನಾದ ನಾಬಾಲನ ವಿಧವೆ ಅಬೀಗೈಲಳಿಂದ ಹುಟ್ಟಿದ ಅವನ ಎರಡನೆಯ ಮಗ ಕಿಲಾಬನೂ; ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು;</verse>
				<verse number="4">ಹಗ್ಗೀತಳಿಂದ ಹುಟ್ಟಿದ ನಾಲ್ಕನೆಯ ಮಗ ಅದೋನೀಯನು; ಅಬೀಟಾಲಳಿಂದ ಹುಟ್ಟಿದ ಐದನೆಯ ಮಗ ಶೆಫಟ್ಯನು;</verse>
				<verse number="5">ದಾವೀದನ ಹೆಂಡತಿ ಎಗ್ಲಳಿಂದ ಹುಟ್ಟಿದ ಆರನೆಯ ಮಗ ಇತ್ರಾಮನು. ಇವರು ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದವರು.</verse>
				<verse number="6">ಸೌಲನ ಕುಟುಂಬಕ್ಕೂ ದಾವೀದನ ಕುಟುಂಬಕ್ಕೂ ಯುದ್ಧ ನಡೆಯುತ್ತಿರುವಾಗ, ಅಬ್ನೇರನು ಸೌಲನ ಕುಟುಂಬದಲ್ಲಿ ತನ್ನದೇ ಆದ ಸ್ಥಾನವನ್ನು ಬಲಪಡಿಸಿಕೊಂಡನು.</verse>
				<verse number="7">ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳೆಂಬ ಹೆಸರುಳ್ಳ ಒಬ್ಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರನಿಗೆ, “ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇಕೆ?” ಎಂದನು.</verse>
				<verse number="8">ಆಗ ಅಬ್ನೇರನು ಈಷ್ಬೋಶೆತನ ಮಾತುಗಳಿಗೆ ಬಹುಕೋಪಗೊಂಡು, “ನಾನು ನಿನ್ನನ್ನು ದಾವೀದನ ಕೈಯಲ್ಲಿ ಒಪ್ಪಿಸಿಕೊಡದೆ ಈ ದಿವಸದವರೆಗೂ ಯೆಹೂದವನ್ನು ವಿರೋಧಿಸಿ, ನಿನ್ನ ತಂದೆ ಸೌಲನ ಕುಟುಂಬಕ್ಕೂ ಅವನ ಸಹೋದರರಿಗೂ, ಸ್ನೇಹಿತರಿಗೂ ದಯೆ ತೋರಿಸಿದ ನನ್ನನ್ನು ನೀನು ಈ ಹೊತ್ತು ಈ ಸ್ತ್ರೀಗೋಸ್ಕರ ನನ್ನಲ್ಲಿ ತಪ್ಪು ಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ?</verse>
				<verse number="9">ನಾನು ಸೌಲನ ಕುಟುಂಬದಿಂದ ರಾಜ್ಯವನ್ನು ತಪ್ಪಿಸಿ, ಯೆಹೋವ ದೇವರು ದಾವೀದನಿಗೆ ಆಣೆ ಇಟ್ಟ ಪ್ರಕಾರವೇ,</verse>
				<verse number="10">ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ಮಟ್ಟಿಗೂ ಇರುವ ಇಸ್ರಾಯೇಲಿನ ಮೇಲೆಯೂ, ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ ನಾನು ಮಾಡದೆ ಇದ್ದರೆ, ದೇವರು ಅಬ್ನೇರನಿಗೆ ಹೀಗೆಯೂ ಅಧಿಕವಾಗಿಯೂ ಮಾಡಲಿ,” ಎಂದನು.</verse>
				<verse number="11">ಈಷ್ಬೋಶೆತನು ಅಬ್ನೇರನಿಗೆ ಭಯಪಟ್ಟದ್ದರಿಂದ ಒಂದು ಮಾತಾದರೂ ಪ್ರತ್ಯುತ್ತರ ಹೇಳಲಾರದೆ ಇದ್ದನು.</verse>
				<verse number="12">ಆಗ ಅಬ್ನೇರನು ತನ್ನ ಪರವಾಗಿ ದಾವೀದನ ಬಳಿಗೆ ತನ್ನ ದೂತರನ್ನು ಕಳುಹಿಸಿ, “ದೇಶವು ಯಾರದು? ಇದಲ್ಲದೆ ನೀನು ನನ್ನ ಸಂಗಡ ಒಡಂಬಡಿಕೆಯನ್ನು ಮಾಡು. ಆಗ ಇಗೋ, ಇಸ್ರಾಯೇಲರನ್ನೆಲ್ಲಾ ನಿನ್ನ ಬಳಿಗೆ ಬರಮಾಡುವ ಹಾಗೆ ನನ್ನ ಕೈ ನಿನ್ನ ಸಂಗಡ ಇರುವುದೆಂದು ಹೇಳಿರಿ,” ಎಂದನು.</verse>
				<verse number="13">ಅದಕ್ಕೆ ದಾವೀದನು, “ಒಳ್ಳೆಯದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು. ಆದರೆ ನಾನು ನಿನ್ನಲ್ಲಿ ಒಂದನ್ನು ಕೇಳುತ್ತೇನೆ.” ಏನೆಂದರೆ, “ನೀನು ನನ್ನನ್ನು ನೋಡುವುದಕ್ಕೆ ಬರುವಾಗ, ಸೌಲನ ಮಗಳಾದ ಮೀಕಲಳನ್ನು ನೀನು ಕರೆದುಕೊಂಡು ಬಾರದೆ ಹೋದರೆ, ನೀನು ನನ್ನ ಮುಖವನ್ನು ಕಾಣಬಾರದು,” ಎಂದನು.</verse>
				<verse number="14">ದಾವೀದನು ಸೌಲನ ಮಗ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರ ನೂರು ಮುಂದೊಗಲುಗಳಿಂದ ನನಗೆ ನೇಮಕ ಮಾಡಿಕೊಂಡ ನನ್ನ ಹೆಂಡತಿಯಾದ ಮೀಕಲಳನ್ನು ನನಗೆ ಒಪ್ಪಿಸು,” ಎಂದನು.</verse>
				<verse number="15">ಆಗ ಈಷ್ಬೋಶೆತನು ಸೇವಕರನ್ನು ಕಳುಹಿಸಿ, ಲಯಿಷನ ಮಗನಾಗಿರುವ ಅವಳ ಗಂಡ ಪಲ್ಟೀಯೇಲನಿಂದ ಅವಳನ್ನು ಕರೆಯಿಸಿಕೊಂಡನು.</verse>
				<verse number="16">ಅವಳ ಗಂಡನು ಅವಳ ಸಂಗಡ ಬಹುರೀಮಿನವರೆಗೂ ಅಳುತ್ತಾ ಅವಳ ಹಿಂದೆ ಹೋದನು. ಆಗ ಅಬ್ನೇರನು ಅವನಿಗೆ, “ತಿರುಗಿ ಹೋಗು ಹಿಂದಿರುಗು,” ಎಂದನು. ಅವನು ತಿರುಗಿಹೋದನು.</verse>
				<verse number="17">ಅಬ್ನೇರನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ, “ದಾವೀದನು ನಿಮ್ಮ ಮೇಲೆ ಅರಸನಾಗಿರುವುದಕ್ಕೆ ನೀವು ಹುಡುಕುತ್ತಿದ್ದೀರಿ.</verse>
				<verse number="18">ಆದರೆ ಈಗ ಅದನ್ನು ಮಾಡಿರಿ. ಏಕೆಂದರೆ, ‘ನಾನು ನನ್ನ ದಾಸನಾದ ದಾವೀದನ ಕೈಯಿಂದ ಜನರಾದ ಇಸ್ರಾಯೇಲರನ್ನು ಫಿಲಿಷ್ಟಿಯರ ಕೈಯಿಂದಲೂ, ಅವರ ಸಮಸ್ತ ಶತ್ರುಗಳ ಕೈಯಿಂದಲೂ ತಪ್ಪಿಸಿ ರಕ್ಷಿಸುವೆನು,’ ಎಂದು ಯೆಹೋವ ದೇವರು ದಾವೀದನ ವಿಷಯದಲ್ಲಿ ಹೇಳಿದ್ದಾರೆ,” ಎಂದನು.</verse>
				<verse number="19">ಇದಲ್ಲದೆ ಅಬ್ನೇರನು ಬೆನ್ಯಾಮೀನ್ಯರ ಸಂಗಡ ಮಾತನಾಡಿದನು. ಅಬ್ನೇರನು ಇಸ್ರಾಯೇಲರ ದೃಷ್ಟಿಗೂ ಬೆನ್ಯಾಮೀನನ ಮನೆಯವರೆಲ್ಲರ ದೃಷ್ಟಿಗೂ ಒಳ್ಳೆಯದಾಗಿ ತೋರಿದ್ದನ್ನೆಲ್ಲಾ ದಾವೀದನಿಗೆ ತಿಳಿಸುವುದಕ್ಕೆ ಹೆಬ್ರೋನಿಗೆ ಹೋದನು.</verse>
				<verse number="20">ಹೀಗೆಯೇ ಅಬ್ನೇರನು ತನ್ನ ಸಂಗಡ ಇಪ್ಪತ್ತು ಜನರನ್ನು ಕರೆದುಕೊಂಡು, ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದನು. ದಾವೀದನು ಅಬ್ನೇರನಿಗೂ, ಅವನ ಸಂಗಡ ಬಂದ ಜನರಿಗೂ ಔತಣ ಮಾಡಿಸಿದನು.</verse>
				<verse number="21">ಆಗ ಅಬ್ನೇರನು ದಾವೀದನಿಗೆ, “ಸಮಸ್ತ ಇಸ್ರಾಯೇಲರು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವ ಹಾಗೆಯೂ, ನಿನ್ನ ಪ್ರಾಣವು ಇಚ್ಛೈಸುವ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ, ಸಮಸ್ತ ಇಸ್ರಾಯೇಲರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು,” ಎಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು.</verse>
				<verse number="22">ಆಗ ದಾವೀದನ ಸೇವಕರೂ ಯೋವಾಬನೂ ಒಂದು ಸೈನ್ಯದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಬಂದರು. ಆಗ ಅಬ್ನೇರನು ಹೆಬ್ರೋನಿನಲ್ಲಿ ದಾವೀದನ ಸಂಗಡ ಇರಲಿಲ್ಲ. ಏಕೆಂದರೆ ಅವನು ಅಬ್ನೇರನನ್ನು ಕಳುಹಿಸಿಬಿಟ್ಟದ್ದರಿಂದ, ಅವನು ಸಮಾಧಾನವಾಗಿ ಹೋದನು.</verse>
				<verse number="23">ಯೋವಾಬನೂ ಅವನ ಸಂಗಡ ಇದ್ದ ಸೈನ್ಯವೂ ಬಂದಾಗ ಅಲ್ಲಿದ್ದವರು ಯೋವಾಬನಿಗೆ, “ನೇರನ ಮಗ ಅಬ್ನೇರನು ಅರಸನ ಬಳಿಗೆ ಬಂದನು. ದಾವೀದನು ಅವನನ್ನು ಕಳುಹಿಸಿಬಿಟ್ಟದ್ದರಿಂದ ಸಮಾಧಾನವಾಗಿ ಹೋಗಿದ್ದಾನೆ,” ಎಂದರು.</verse>
				<verse number="24">ಆಗ ಯೋವಾಬನು ಅರಸನ ಬಳಿಗೆ ಬಂದು, “ಏನು ಮಾಡಿದೆ? ಅಬ್ನೇರನು ನಿನ್ನ ಬಳಿಗೆ ಬಂದನು. ಅವನು ಹೋಗಿ ಬಿಡುವ ಹಾಗೆ ನೀನು ಅವನನ್ನು ಕಳುಹಿಸಿಬಿಟ್ಟದ್ದು ಏಕೆ?</verse>
				<verse number="25">ನೇರನ ಮಗ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಆಗಮನ, ನಿರ್ಗಮನಗಳನ್ನು ತಿಳಿದುಕೊಳ್ಳುವುದಕ್ಕೂ, ನೀನು ಮಾಡುವುದನ್ನೆಲ್ಲಾ ಕಂಡುಹಿಡಿಯುವುದಕ್ಕೂ ಬಂದಿದ್ದನು,” ಎಂದನು.</verse>
				<verse number="26">ಯೋವಾಬನು ದಾವೀದನನ್ನು ಬಿಟ್ಟು ಹೊರಟುಬಂದಾಗ, ಅವನು ಅಬ್ನೇರನ ಹಿಂದೆ ದೂತರನ್ನು ಕಳುಹಿಸಿದನು. ಅವರು ಅವನನ್ನು ಸಿರಾ ಎಂಬ ಬಾವಿಯಿಂದ ತಿರುಗಿ ಕರೆದುಕೊಂಡು ಬಂದರು. ಆದರೆ ದಾವೀದನಿಗೆ ಅದು ತಿಳಿಯದೆ ಇತ್ತು.</verse>
				<verse number="27">ಅಬ್ನೇರನು ಹೆಬ್ರೋನಿಗೆ ತಿರುಗಿ ಬಂದ ತರುವಾಯ ಯೋವಾಬನ ಬಾಗಿಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತನಾಡಿ, ಅವನನ್ನು ಒಂದು ಕಡೆ ಕರೆದುಕೊಂಡು ಹೋಗಿ, ತನ್ನ ತಮ್ಮ ಅಸಾಯೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಹೊಟ್ಟೆಯಲ್ಲಿ ಇರಿದು ಕೊಂದುಹಾಕಿದನು.</verse>
				<verse number="28">ದಾವೀದನು ಅದನ್ನು ಕೇಳಿದಾಗ, “ನೇರನ ಮಗನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಯೆಹೋವ ದೇವರ ಮುಂದೆ ನಿರಪರಾಧಿಯಾಗಿದ್ದೇವೆ.</verse>
				<verse number="29">ಅದು ಯೋವಾಬನ ತಲೆಯ ಮೇಲೆಯೂ, ಅವನ ತಂದೆಯ ಮನೆತನದವರ ಮೇಲೆಯೂ ನಿಂತಿರಲಿ. ಯೋವಾಬನ ಮನೆಯಲ್ಲಿ ರಕ್ತಸ್ರಾವ ರೋಗದವರೂ, ಕುಷ್ಠರೋಗಿಯೂ, ಕೋಲು ಹಿಡಿದು ನಡೆಯುವವನೂ, ಖಡ್ಗದಿಂದ ಬೀಳುವವನೂ, ಆಹಾರದ ಕೊರತೆಯುಳ್ಳವನಾಗಿಯೂ ಇದ್ದೇ ಇರಲಿ,” ಎಂದನು.</verse>
				<verse number="30">ಹೀಗೆ ಯೋವಾಬ ಮತ್ತು ಅಬೀಷೈ ಅಬ್ನೇರನನ್ನು ಕೊಂದುಹಾಕಿದರು. ಏಕೆಂದರೆ ಅಬ್ನೇರನು ಅವನ ಸಹೋದರ ಅಸಾಯೇಲನನ್ನು ಗಿಬ್ಯೋನಿನ ಯುದ್ಧದಲ್ಲಿ ಕೊಂದುಹಾಕಿದ್ದನು.</verse>
				<verse number="31">ದಾವೀದನು ಯೋವಾಬನಿಗೂ, ಅವನ ಸಂಗಡವಿದ್ದ ಸಮಸ್ತ ಜನರಿಗೂ, “ನೀವು ನಿಮ್ಮ ವಸ್ತ್ರಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಉಟ್ಟುಕೊಂಡು, ಅಬ್ನೇರನ ಮುಂದೆ ಗೋಳಾಡಿರಿ,” ಎಂದನು. ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು.</verse>
				<verse number="32">ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಹೂಳಿಟ್ಟರು. ಆಗ ಅರಸನು ತನ್ನ ಧ್ವನಿಯನ್ನೆತ್ತಿ ಅಬ್ನೇರನ ಸಮಾಧಿಯ ಬಳಿಯಲ್ಲಿ ಅತ್ತನು; ಜನರೆಲ್ಲರು ಅತ್ತರು.</verse>
				<verse number="33">ಅರಸನು ಅಬ್ನೇರನಿಗೋಸ್ಕರ ಗೋಳಾಡಿ ಹೀಗೆ ಹಾಡಿದನು: “ಬುದ್ಧಿಹೀನನು ಸತ್ತ ಹಾಗೆಯೇ, ಅಬ್ನೇರನು ಸತ್ತನೋ?</verse>
				<verse number="34">ನಿನ್ನ ಕೈಗಳು ಕಟ್ಟಿರಲಿಲ್ಲ. ನಿನ್ನ ಕಾಲಿಗೆ ಬೇಡಿ ಹಾಕಿರಲಿಲ್ಲ. ಒಬ್ಬನು ದುಷ್ಟರ ಮುಂದೆ ಬೀಳುವ ಹಾಗೆಯೇ ನೀನು ಬಿದ್ದು ಹೋದೆ.” ಆಗ ಜನರೆಲ್ಲರು ತಿರುಗಿ ಅವನಿಗೋಸ್ಕರ ಅತ್ತರು.</verse>
				<verse number="35">ಇನ್ನೂ ಹೊತ್ತಿರುವಾಗಲೇ ಜನರೆಲ್ಲರು ಬಂದು ಊಟಮಾಡು ಎಂದು ದಾವೀದನಿಗೆ ಹೇಳಿದರು. ಅದಕ್ಕೆ ದಾವೀದನು, “ಸೂರ್ಯನು ಅಸ್ತಮಿಸುವುದಕ್ಕಿಂತ ಮುಂಚೆ ನಾನು ರೊಟ್ಟಿಯನ್ನಾಗಲಿ, ಬೇರೆ ಯಾವ ಆಹಾರವನ್ನಾಗಲಿ ರುಚಿ ನೋಡಿದರೆ, ದೇವರು ನನಗೆ ಬೇಕಾದದ್ದನ್ನು ಮಾಡಲಿ, ಅಧಿಕವಾಗಿಯೂ ಮಾಡಲಿ,” ಎಂದು ಆಣೆ ಇಟ್ಟುಕೊಂಡನು.</verse>
				<verse number="36">ಜನರೆಲ್ಲರು ಅದನ್ನು ತಿಳಿದುಕೊಂಡಾಗ, ಅವರೆಲ್ಲರಿಗೆ ಮೆಚ್ಚಿಗೆಯಾಯಿತು. ಹಾಗೆಯೇ ಅರಸನು ಏನೇನು ಮಾಡಿದನೋ, ಅದು ಜನರಿಗೆ ಮೆಚ್ಚಿಗೆಯಾಗಿತ್ತು.</verse>
				<verse number="37">ಏಕೆಂದರೆ ನೇರನ ಮಗ ಅಬ್ನೇರನನ್ನು ಕೊಂದುಹಾಕಿದ್ದು ಅರಸನಿಂದ ಆದದ್ದಲ್ಲವೆಂದು ಸಮಸ್ತ ಜನರೂ, ಸಮಸ್ತ ಇಸ್ರಾಯೇಲರೂ ಆ ದಿವಸದಲ್ಲಿ ತಿಳಿದುಕೊಂಡರು.</verse>
				<verse number="38">ಇದಲ್ಲದೆ ಅರಸನು ತನ್ನ ಸೇವಕರಿಗೆ, “ಇಸ್ರಾಯೇಲಿನಲ್ಲಿ ಈ ಹೊತ್ತು ಪ್ರಧಾನನೂ ದೊಡ್ಡವನೂ ಬಿದ್ದಿದ್ದಾನೆಂದು ಗೊತ್ತಿಲ್ಲವೋ?</verse>
				<verse number="39">ನಾನು ಅರಸನಾಗಿ ಅಭಿಷೇಕ ಹೊಂದಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಪುತ್ರರಾದ ಇವರು ನನ್ನ ಹತೋಟಿಗೆ ಬಾರದವರು. ಕೆಟ್ಟತನ ಮಾಡುವವನಿಗೆ ಯೆಹೋವ ದೇವರು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವರು,” ಎಂದನು.</verse>
			</chapter>
			<chapter number="4">
				<verse number="1">ಅಬ್ನೇರನು ಹೆಬ್ರೋನಿನಲ್ಲಿ ಮರಣ ಹೊಂದಿದನೆಂದು ಸೌಲನ ಮಗ ಈಷ್ಬೋಶೆತನು ಕೇಳಿದಾಗ, ಅವನು ಧೈರ್ಯವನ್ನು ಕಳೆದುಕೊಂಡನು. ಇಸ್ರಾಯೇಲರೆಲ್ಲರು ಕಳವಳಗೊಂಡರು.</verse>
				<verse number="2">ಆದರೆ ಸೌಲನ ಮಗನಿಗೆ ಸೇನಾಪತಿಗಳು ಇಬ್ಬರಿದ್ದರು. ಒಬ್ಬನ ಹೆಸರು ಬಾಣನು. ಮತ್ತೊಬ್ಬನ ಹೆಸರು ರೇಕಾಬನು. ಇವರು ಬೆನ್ಯಾಮೀನ್ ಗೋತ್ರದಲ್ಲಿ ಬೇರೋತ್ ಗ್ರಾಮದವನಾದ ರಿಮ್ಮೋನನ ಮಕ್ಕಳು. ಏಕೆಂದರೆ ಬೇರೋತ್ ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ.</verse>
				<verse number="3">ಆದರೆ ಬೇರೋತ್ಯರು ಗಿತ್ತಯಿಮಿಗೆ ಓಡಿಹೋಗಿ ಇಂದಿನವರೆಗೂ ಅಲ್ಲಿ ಪ್ರವಾಸಿಗಳಾಗಿದ್ದಾರೆ.</verse>
				<verse number="4">ಸೌಲನ ಮಗ ಯೋನಾತಾನನಿಗೆ ಕಾಲು ಕುಂಟಾದ ಒಬ್ಬ ಮಗನಿದ್ದನು. ಸೌಲನೂ, ಯೋನಾತಾನನೂ ಮರಣ ಹೊಂದಿದರೆಂಬ ವರ್ತಮಾನ ಇಜ್ರೆಯೇಲ್ ಎಂಬ ಪಟ್ಟಣದಿಂದ ಬಂದಾಗ, ಅವನು ಐದು ವರ್ಷದವನಾಗಿದ್ದನು. ಆಗ ಅವನ ದಾದಿಯು ಅವನನ್ನು ಎತ್ತಿಕೊಂಡು ಓಡಿ ಹೋದಳು. ಅವಳು ತ್ವರೆಯಾಗಿ ಓಡಿದಾಗ, ಅವನು ಬಿದ್ದು ಕುಂಟನಾದನು. ಅವನ ಹೆಸರು ಮೆಫೀಬೋಶೆತನು.</verse>
				<verse number="5">ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬನೂ, ಬಾಣನೂ ಹೊರಟು ಮಧ್ಯಾಹ್ನದ ಬಿಸಿಲು ಹೊತ್ತಿನಲ್ಲಿ ಈಷ್ಬೋಶೆತನ ಮನೆಗೆ ಬಂದರು. ಅವನು ಮಂಚದ ಮೇಲೆ ಮಲಗಿಕೊಂಡಿದ್ದನು.</verse>
				<verse number="6">ಅವರು ಗೋಧಿಯನ್ನು ತೆಗೆದುಕೊಂಡು ಹೋಗುವವರಂತೆ ನಡುಮನೆಯೊಳಗೆ ಹೋಗಿ ಅವನ ಹೊಟ್ಟೆಯಲ್ಲಿ ತಿವಿದರು. ರೇಕಾಬನೂ ಅವನ ಸಹೋದರ ಬಾಣನೂ ಗುಟ್ಟಾಗಿ ಒಳಗೆ ಜಾರಿಕೊಂಡರು.</verse>
				<verse number="7">ಅವರು ಮನೆಯೊಳಗೆ ಪ್ರವೇಶಿಸಿದಾಗ, ಅರಸನು ಮಲಗುವ ಕೋಣೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದನು. ಅವರಿಬ್ಬರು ಅವನನ್ನು ಹೊಡೆದು, ಕೊಂದುಹಾಕಿ, ತಲೆಯನ್ನು ಕಡಿದು, ಅದನ್ನು ತೆಗೆದುಕೊಂಡು ರಾತ್ರಿಯೆಲ್ಲಾ ಅರಾಬಾ ತಗ್ಗಿನಲ್ಲಿ ನಡೆದರೆ.</verse>
				<verse number="8">ಅನಂತರ ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಈಷ್ಬೋಶೆತನ ತಲೆಯನ್ನು ತಂದು ಅರಸನಿಗೆ, “ಇಗೋ, ನಿನ್ನ ಪ್ರಾಣವನ್ನು ಹುಡುಕಿದ ನಿನ್ನ ಶತ್ರುವಾಗಿದ್ದ ಸೌಲನ ಮಗ ಈಷ್ಬೋಶೆತನ ತಲೆಯು. ಈ ದಿನದಲ್ಲಿ ಯೆಹೋವ ದೇವರು ಅರಸನಾದ ನಮ್ಮ ಒಡೆಯನಿಗೋಸ್ಕರ ಸೌಲನಿಗೂ, ಅವನ ಸಂತಾನಕ್ಕೂ ಮುಯ್ಯಿ ತೀರಿಸಿದ್ದಾರೆ,” ಎಂದರು.</verse>
				<verse number="9">ಆಗ ದಾವೀದನು ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬನಿಗೂ, ಅವನ ಸಹೋದರ ಬಾಣನಿಗೂ ಉತ್ತರವಾಗಿ, “ಎಲ್ಲಾ ಇಕ್ಕಟ್ಟಿನಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಯೆಹೋವ ದೇವರ ಜೀವದಾಣೆ,</verse>
				<verse number="10">ಶುಭವರ್ತಮಾನವನ್ನು ತಂದವನು ನಾನು, ತನ್ನ ವರ್ತಮಾನಕ್ಕೋಸ್ಕರ ಬಹುಮಾನವನ್ನು ಕೊಡುವೆನೆಂದು ನೆನಸಿ ಒಬ್ಬನು ನನಗೆ, ‘ಇಗೋ, ಸೌಲನು ಮರಣಹೊಂದಿದನು,’ ಎಂದು ಹೇಳಿದ್ದರಿಂದ, ನಾನು ಚಿಕ್ಲಗಿನಲ್ಲಿ ಅವನಿಗೆ ಮರಣದಂಡನೆಯನ್ನು ವಿಧಿಸಿದೆನು.</verse>
				<verse number="11">ಹಾಗಾದರೆ, ತನ್ನ ಮನೆಯಲ್ಲಿ ತನ್ನ ಹಾಸಿಗೆಯ ಮೇಲೆ ಮಲಗಿದ್ದ ನಿರ್ದೋಷಿಯನ್ನು ಕೊಲೆಮಾಡಿದ ದುಷ್ಟ ಮನುಷ್ಯರನ್ನು ಎಷ್ಟೋ ಹೆಚ್ಚಾಗಿ ಕೊಲ್ಲಿಸುವೆನು. ಈಗ ನಾನು ನಿಮ್ಮ ಕೈಯಿಂದ ಅವನ ರಕ್ತ ವಿಚಾರಣೆ ಮಾಡಿ, ನಿಮ್ಮನ್ನು ಭೂಮಿಯಿಂದ ತೆಗೆದುಬಿಡುವೆನು,” ಎಂದನು.</verse>
				<verse number="12">ದಾವೀದನು ತನ್ನ ಜನರಿಗೆ ಆಜ್ಞಾಪಿಸಿದ್ದರಿಂದ, ಅವರು ಅವರನ್ನು ಕೊಂದುಹಾಕಿ, ಅವರ ಕೈಕಾಲುಗಳನ್ನು ಕಡಿದು, ಹೆಬ್ರೋನಿನ ಕೊಳದ ಬಳಿಯಲ್ಲಿ ತೂಗುಹಾಕಿದರು. ಈಷ್ಬೋಶೆತನ ತಲೆಯನ್ನು ತೆಗೆದುಕೊಂಡು, ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಳಿಟ್ಟರು.</verse>
			</chapter>
			<chapter number="5">
				<verse number="1">ಇಸ್ರಾಯೇಲಿನ ಎಲ್ಲಾ ಗೋತ್ರದವರು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದು, “ನಾವು ನಿನ್ನ ಎಲುಬೂ, ನಿನ್ನ ಮಾಂಸವೂ ಆಗಿದ್ದೇವೆ.</verse>
				<verse number="2">ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ, ನೀನು ದಳಪತಿಯಾಗಿ ಇಸ್ರಾಯೇಲನ್ನು ಹೊರಗೆ ನಡೆಸುವವನಾಗಿಯೂ ಒಳಗೆ ತರುವವನಾಗಿಯೂ ಇದ್ದವನು. ಆದ್ದರಿಂದ ಯೆಹೋವ ದೇವರು ನಿನಗೆ, ‘ನೀನು ನನ್ನ ಜನರಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವೆ ಎಂದು ಹೇಳಿದರು,’ ” ಎಂದರು.</verse>
				<verse number="3">ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.</verse>
				<verse number="4">ದಾವೀದನು ಆಳಲು ಪ್ರಾರಂಭಿಸಿದಾಗ, ಮೂವತ್ತು ವರ್ಷದವನಾಗಿದ್ದನು. ಅವನು ನಲವತ್ತು ವರ್ಷ ಆಳಿದನು.</verse>
				<verse number="5">ಅವನು ಹೆಬ್ರೋನಿನಲ್ಲಿ ಯೆಹೂದದ ಮೇಲೆ ಏಳುವರೆ ವರ್ಷ ಆಳಿದನು. ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲರ ಮೇಲೆಯೂ, ಸಮಸ್ತ ಯೆಹೂದದ ಜನರ ಮೇಲೆಯೂ ಮೂವತ್ತು ಮೂರು ವರ್ಷ ಆಳಿದನು.</verse>
				<verse number="6">ಅರಸನೂ ಅವನ ಜನರೂ ಯೆಬೂಸಿಯರ ವಿರುದ್ಧವಾಗಿ ಯೆರೂಸಲೇಮಿಗೆ ಬಂದರು. ದಾವೀದನು ಇದರೊಳಗೆ ಬರಲು ಸಾಧ್ಯವಿಲ್ಲವೆಂದು ಅವರು ನೆನಸಿ ದಾವೀದನಿಗೆ, “ನೀನು ಕಣ್ಣು ಕಾಣದವರನ್ನೂ ಕುಂಟರನ್ನೂ ತೆಗೆದುಹಾಕದ ಹೊರತು, ನೀನು ಇಲ್ಲಿಗೆ ಬರಲಾರೆ,” ಎಂದರು.</verse>
				<verse number="7">ಆದರೂ ದಾವೀದನು ಚೀಯೋನಿನ ಕೋಟೆಯನ್ನು ವಶಪಡಿಸಿಕೊಂಡನು. ಅದೇ ದಾವೀದನ ಪಟ್ಟಣವು.</verse>
				<verse number="8">ಆ ದಿವಸದಲ್ಲಿ ದಾವೀದನು, “ಜಲದ್ವಾರವನ್ನು ದಾಟಿ, ಯೆಬೂಸಿಯರನ್ನು ಜಯಿಸಬೇಕೆಂದಿರುವವನು, ಜಲದ್ವಾರದ ಮೂಲಕ ಹತ್ತಿ ಹೋಗಿ, ನನ್ನನ್ನು ದ್ವೇಷಿಸುವ ಕುರುಡರನ್ನೂ ಕುಂಟರನ್ನೂ ನಾಶಮಾಡಲಿ,” ಎಂದು ಹೇಳಿದ್ದನು. ಆದುದರಿಂದಲೇ, “ಕುರುಡರೂ ಕುಂಟರೂ ಅರಮನೆಯೊಳಗೆ ಪ್ರವೇಶಿಸಲಾರರು,” ಎಂಬ ಗಾದೆಯಾಯಿತು.</verse>
				<verse number="9">ದಾವೀದನು ಕೋಟೆಯಲ್ಲಿ ವಾಸಮಾಡಿದನು, ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ಅವನು ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಒಳಗಿನ ಪೌಳಿಗೋಡೆಯನ್ನು ಕಟ್ಟಿಸಿದನು.</verse>
				<verse number="10">ಹೀಗೆಯೇ ಸರ್ವಶಕ್ತರಾದ ಯೆಹೋವ ದೇವರು ದಾವೀದನ ಸಂಗಡ ಇದ್ದುದರಿಂದ ಅವನು ದಿನದಿನಕ್ಕೆ ಬಲಗೊಳ್ಳುತ್ತಾ ಇದ್ದನು.</verse>
				<verse number="11">ಆಗ ಟೈರಿನ ಅರಸನಾದ ಹೀರಾಮನು ದಾವೀದನ ಬಳಿಗೆ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಮತ್ತು ಕಲ್ಲುಕುಟಿಗರನ್ನು ಕಳುಹಿಸಿದನು, ಅವರು ದಾವೀದನಿಗೆ ಅರಮನೆಯನ್ನು ಕಟ್ಟಿದರು.</verse>
				<verse number="12">ಆಗ ದಾವೀದನು, ತನ್ನನ್ನು ಯೆಹೋವ ದೇವರು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದರೆಂದೂ ತಮ್ಮ ಜನರಾದ ಇಸ್ರಾಯೇಲರ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದರೆಂದೂ ತಿಳಿದುಕೊಂಡನು.</verse>
				<verse number="13">ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ, ಯೆರೂಸಲೇಮಿನಲ್ಲಿ ಸಹ ಕೆಲವು ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಉಪಪತ್ನಿಯರನ್ನಾಗಿಯೂ ಮಾಡಿಕೊಂಡದ್ದರಿಂದ ಅವನಿಗೆ ಇನ್ನೂ ಹೆಚ್ಚು ಪುತ್ರ, ಪುತ್ರಿಯರು ಹುಟ್ಟಿದರು.</verse>
				<verse number="14">ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ಶಮ್ಮೂವ ಎಂಬ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್,</verse>
				<verse number="15">ಇಬ್ಹಾರ್, ಎಲೀಷೂವ, ನೆಫೆಗ್, ಯಾಫೀಯ,</verse>
				<verse number="16">ಎಲೀಷಾಮ, ಎಲ್ಯಾದ, ಎಲೀಫೆಲೆಟ್, ಇವರೇ.</verse>
				<verse number="17">ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಹೊಂದಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ, ಫಿಲಿಷ್ಟಿಯರೆಲ್ಲರೂ ದಾವೀದನನ್ನು ಸೆರೆಹಿಡಿಯಲು ಹೋದರು. ದಾವೀದನು ಅದನ್ನು ಕೇಳಿ ಕೋಟೆ ಸ್ಥಳಕ್ಕೆ ಹೋದನು.</verse>
				<verse number="18">ಆಗ ಫಿಲಿಷ್ಟಿಯರು ಬಂದು ರೆಫಾಯಿಮ್ ತಗ್ಗಿನಲ್ಲಿ ಇಳಿದುಕೊಂಡರು.</verse>
				<verse number="19">ಅದಕ್ಕೆ ದಾವೀದನು, “ನಾನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಬಹುದೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವಿರೋ?” ಎಂದು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು ಅವನಿಗೆ, “ಹೋಗು, ಖಂಡಿತವಾಗಿ ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದು ಹೇಳಿದರು.</verse>
				<verse number="20">ಆದಕಾರಣ ದಾವೀದನು ಬಾಳ್ ಪೆರಾಜಿಮ್ ಎಂಬಲ್ಲಿಗೆ ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಆಗ ದಾವೀದನು, “ಪ್ರವಾಹವು ಕೊಚ್ಚಿಕೊಂಡು ಹೋಗುವಹಾಗೆ, ಯೆಹೋವ ದೇವರು ನನ್ನ ಶತ್ರುಗಳನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾರೆ,” ಎಂದು ಹೇಳಿ, ಆ ಸ್ಥಳಕ್ಕೆ ಬಾಳ್ ಪೆರಾಜಿಮ್ ಎಂದು ಹೆಸರಿಟ್ಟನು.</verse>
				<verse number="21">ಅಲ್ಲಿ ಫಿಲಿಷ್ಟಿಯರು ತಮ್ಮ ವಿಗ್ರಹಗಳನ್ನು ಬಿಟ್ಟು ಹೋದುದರಿಂದ ದಾವೀದನೂ, ಅವನ ಜನರೂ ಅವುಗಳನ್ನು ಸುಟ್ಟುಬಿಟ್ಟರು.</verse>
				<verse number="22">ಫಿಲಿಷ್ಟಿಯರು ಮತ್ತೆ ತಿರುಗಿಬಂದು, ರೆಫಾಯಿಮಿನ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.</verse>
				<verse number="23">ಆದ್ದರಿಂದ ದಾವೀದನು ಇದರ ಬಗ್ಗೆ ಯೆಹೋವ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ, “ನೀನು ಅವರ ಮುಂದೆ ಹೋಗದೆ, ಅವರ ಹಿಂದಿನಿಂದ ಸುತ್ತಿಕೊಂಡು ಹೋಗಿ, ಬಾಕಾಮರಗಳಿಗೆ ಎದುರಾಗಿ ಅವರ ಮೇಲೆ ದಾಳಿಮಾಡು.</verse>
				<verse number="24">ಬಾಕಾಮರಗಳ ತುದಿಗಳಲ್ಲಿ ನಡೆದುಬರುವ ಶಬ್ದವನ್ನು ನೀನು ಕೇಳಿದಾಗಲೇ, ಯೆಹೋವ ದೇವರು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದರು.</verse>
				<verse number="25">ಆಗ ದಾವೀದನು, ಯೆಹೋವ ದೇವರು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ, ಅವನು ಗೆಬದಿಂದ ಗೆಜೆರಿನವರೆಗೆ ಫಿಲಿಷ್ಟಿಯರನ್ನು ಹೊಡೆದನು.</verse>
			</chapter>
			<chapter number="6">
				<verse number="1">ದಾವೀದನು ಇಸ್ರಾಯೇಲಿನಲ್ಲಿ ಆರಿಸಿದ ಮೂವತ್ತು ಸಾವಿರ ಸೈನಿಕರನ್ನು ಕೂಡಿಸಿಕೊಂಡು,</verse>
				<verse number="2">ಆ ಕೆರೂಬಿಗಳ ನಡುವೆ ವಾಸವಾಗಿರುವ ಸೇನಾಧೀಶ್ವರ ಯೆಹೋವ ದೇವರ ಹೆಸರಿನಿಂದ ಕರೆಯಲಾದ ದೇವರ ಮಂಜೂಷವನ್ನು ತೆಗೆದುಕೊಂಡು ಬರಲು ತನ್ನ ಸಂಗಡ ಇದ್ದ ಸಮಸ್ತ ಜನರನ್ನು ಕರೆದುಕೊಂಡು, ಯೆಹೂದದ ಬಾಲಾ ಎಂಬಲ್ಲಿಗೆ ಹೊರಟನು.</verse>
				<verse number="3">ಆಗ ಅವರು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು, ಅದನ್ನು ಹೊಸ ಬಂಡಿಯ ಮೇಲೆ ಏರಿಸಿದರು. ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮಕ್ಕಳಾದ ಉಜ್ಜನು ಹಾಗೂ ಅಹಿಯೋವನು ಆ ಹೊಸ ಬಂಡಿಯನ್ನು ನಡೆಸಿದರು.</verse>
				<verse number="4">ಅಬೀನಾದಾಬನ ಮನೆಯೊಳಗಿಂದ ಅದನ್ನು ಹೊರಗೆ ತಂದಾಗ ಅಹಿಯೋವನು ದೇವರ ಮಂಜೂಷದ ಮುಂದೆ ನಡೆದನು.</verse>
				<verse number="5">ದಾವೀದನೂ, ಸಮಸ್ತ ಇಸ್ರಾಯೇಲರೂ ಸಕಲ ವಾದ್ಯಗಳಾದ ಕಿನ್ನರಿ, ವೀಣೆ, ದಮ್ಮಡಿ, ಸ್ವರಮಂಡಲ, ತಾಳ, ತುತೂರಿ ಇವುಗಳನ್ನು ತಮ್ಮ ಸಮಸ್ತ ಬಲದಿಂದ ಬಾರಿಸುತ್ತಾ, ಹಾಡುತ್ತಾ ಯೆಹೋವ ದೇವರ ಮುಂದೆ ಹೋದರು.</verse>
				<verse number="6">ಅವರು ನಾಕೋನನ ಕಣದ ಬಳಿಗೆ ಬಂದಾಗ, ಎತ್ತುಗಳು ಎಡವಿದ್ದರಿಂದ ಉಜ್ಜನು ತನ್ನ ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.</verse>
				<verse number="7">ಆಗ ಯೆಹೋವ ದೇವರು ಉಜ್ಜನ ಮೇಲೆ ಕೋಪಗೊಂಡು, ಅಂಥ ಅಗೌರವಕ್ಕಾಗಿ ದೇವರು ಅವನನ್ನು ಶಿಕ್ಷಿಸಿದರು; ಅವನು ಅಲ್ಲಿಯೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.</verse>
				<verse number="8">ಯೆಹೋವ ದೇವರು ಉಜ್ಜನನ್ನು ಶಿಕ್ಷಿಸಿದ್ದರಿಂದ, ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು, ಇಂದಿನವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಕರೆಯಲಾಗುತ್ತದೆ.</verse>
				<verse number="9">ದಾವೀದನು ಆ ದಿನ ಯೆಹೋವ ದೇವರಿಗೆ ಭಯಪಟ್ಟು, “ಯೆಹೋವ ದೇವರ ಮಂಜೂಷವನ್ನು ನಾನಿರುವಲ್ಲಿಗೆ ಹೇಗೆ ತೆಗೆದುಕೊಂಡು ಹೋಗುವದು?” ಎಂದನು.</verse>
				<verse number="10">ದಾವೀದನು ಯೆಹೋವ ದೇವರ ಮಂಜೂಷವನ್ನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ, ಗಿತ್ತೀಯನಾದ ಓಬೇದ್ ಏದೋಮನ ಮನೆಗೆ ತೆಗೆದುಕೊಂಡು ಹೋದನು.</verse>
				<verse number="11">ಯೆಹೋವ ದೇವರ ಮಂಜೂಷವು ಗಿತ್ತೀಯನಾದ ಓಬೇದ್ ಏದೋಮನ ಮನೆಯಲ್ಲಿ ಮೂರು ತಿಂಗಳು ಇದ್ದುದರಿಂದ, ಯೆಹೋವ ದೇವರು ಓಬೇದ್ ಎದೋಮನನ್ನೂ, ಅವನ ಮನೆಯವರೆಲ್ಲರನ್ನೂ ಆಶೀರ್ವದಿಸಿದರು.</verse>
				<verse number="12">“ದೇವರ ಮಂಜೂಷದ ನಿಮಿತ್ತ ಯೆಹೋವ ದೇವರು ಓಬೇದ್ ಏದೋಮನ ಮನೆಯನ್ನೂ, ಅವನಿಗೆ ಉಂಟಾದದ್ದೆಲ್ಲವನ್ನೂ ಆಶೀರ್ವದಿಸಿದ್ದಾರೆ,” ಎಂದು ಅರಸನಾದ ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು ಹೋಗಿ, ಓಬೇದ್ ಏದೋಮನ ಮನೆಯೊಳಗಿಂದ ದೇವರ ಮಂಜೂಷವನ್ನು ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.</verse>
				<verse number="13">ಯೆಹೋವ ದೇವರ ಮಂಜೂಷವನ್ನು ಹೊತ್ತುಕೊಂಡು ಹೋಗುವವರು ಆರು ಹೆಜ್ಜೆ ನಡೆದಾಗ, ಅವನು ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ ಬಲಿಯಾಗಿ ಅರ್ಪಿಸಿದರು.</verse>
				<verse number="14">ಇದಲ್ಲದೆ ದಾವೀದನು ನಾರಿನ ಏಫೋದನ್ನು ಧರಿಸಿಕೊಂಡು, ತನ್ನ ಪೂರ್ಣಬಲದಿಂದ ಯೆಹೋವ ದೇವರ ಮುಂದೆ ಕುಣಿದಾಡಿದನು.</verse>
				<verse number="15">ಈ ಪ್ರಕಾರ ದಾವೀದನೂ, ಇಸ್ರಾಯೇಲರೆಲ್ಲರೂ ಯೆಹೋವ ದೇವರ ಮಂಜೂಷವನ್ನು ಆರ್ಭಟದಿಂದಲೂ, ತುತೂರಿಯ ಶಬ್ದದಿಂದಲೂ ಬರಮಾಡಿದರು.</verse>
				<verse number="16">ಯೆಹೋವ ದೇವರ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ, ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ನೋಡಿ, ಅರಸನಾದ ದಾವೀದನು ಯೆಹೋವ ದೇವರ ಮುಂದೆ ಕುಣಿದಾಡುವುದನ್ನು ಕಂಡು, ತನ್ನ ಹೃದಯದಲ್ಲಿ ಅವನನ್ನು ತಿರಸ್ಕರಿಸಿದಳು.</verse>
				<verse number="17">ಅವರು ಯೆಹೋವ ದೇವರ ಮಂಜೂಷವನ್ನು ಒಳಗೆ ತಂದು, ದಾವೀದನು ಅದಕ್ಕೋಸ್ಕರ ಹಾಕಿದ ಗುಡಾರದೊಳಗೆ ಅದರ ನಿಯಮಿತ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ, ದಾವೀದನು ಯೆಹೋವ ದೇವರ ಸನ್ನಿಧಿಯಲ್ಲಿ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು.</verse>
				<verse number="18">ದಾವೀದನು ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದ ತರುವಾಯ, ಸೇನಾಧೀಶ್ವರ ಯೆಹೋವ ದೇವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ,</verse>
				<verse number="19">ನೆರೆದುಬಂದ ಇಸ್ರಾಯೇಲಿನ ಪ್ರತಿಯೊಬ್ಬ ಪುರುಷನಿಗೂ ಸ್ತ್ರೀಗೂ, ಒಂದು ರೊಟ್ಟಿಯನ್ನೂ, ಖರ್ಜೂರದ ಉಂಡೆಯನ್ನೂ, ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಹಂಚಿದನು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.</verse>
				<verse number="20">ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ತಿರುಗಿದಾಗ, ಸೌಲನ ಮಗಳಾದ ಮೀಕಲಳು ದಾವೀದನಿಗೆ ಎದುರಾಗಿ ಬಂದು, “ನಿಷ್ಪ್ರಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿ ಹಾಕಿದ ಹಾಗೆಯೇ, ಈ ಹೊತ್ತು ತನ್ನ ಸೇವಕರ ದಾಸಿಯರ ಕಣ್ಣು ಮುಂದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಹೊಂದಿದನು?” ಎಂದಳು.</verse>
				<verse number="21">ಆದರೆ ದಾವೀದನು ಮೀಕಲಳಿಗೆ, “ನಾನು ಕುಣಿದದ್ದು ಯೆಹೋವ ದೇವರ ಸನ್ನಿಧಿಯಲ್ಲಿ ಮಾತ್ರ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟುಬಿಟ್ಟು, ನನ್ನನ್ನೇ ಆರಿಸಿಕೊಂಡು, ತಮ್ಮ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಆ ಯೆಹೋವ ದೇವರ ಮುಂದೆ ಇನ್ನೂ ಹೆಚ್ಚಾಗಿ ಕುಣಿದಾಡುವೆನು.</verse>
				<verse number="22">ನಾನು ಇನ್ನೂ ಇದಕ್ಕಿಂತ ಅಲ್ಪನಾಗಿರುವುದಕ್ಕೂ, ಹೀನೈಸಿಕೊಳ್ಳುವುದಕ್ಕೂ, ಸಿದ್ಧನಾಗಿದ್ದೇನೆ. ಆದರೆ ನೀನು ಹೇಳಿದ ದಾಸಿಯರಿಂದ ನಿಶ್ಚಯವಾಗಿ ಘನತೆಯನ್ನು ಹೊಂದುವೆನು,” ಎಂದನು.</verse>
				<verse number="23">ಆದ್ದರಿಂದ ಸೌಲನ ಮಗಳಾದ ಮೀಕಲಳು ತನ್ನ ಮರಣದ ದಿವಸದ ಮಟ್ಟಿಗೂ ಮಕ್ಕಳು ಆಗಲಿಲ್ಲ.</verse>
			</chapter>
			<chapter number="7">
				<verse number="1">ಯೆಹೋವ ದೇವರು ಅರಸನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ, ಅರಸನು ವಿಶ್ರಾಂತಿಯಿಂದ ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ,</verse>
				<verse number="2">ಒಂದು ದಿನ ಅರಸನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಆದರೆ ದೇವರ ಮಂಜೂಷವು ಗುಡಾರದಲ್ಲಿರುತ್ತದೆ,” ಎಂದನು.</verse>
				<verse number="3">ಆಗ ನಾತಾನನು ಅರಸನಿಗೆ, “ಆಗಲಿ ನಿನ್ನ ಹೃದಯದಲ್ಲಿ ಏನು ಇದೆಯೋ ಅದನ್ನು ಮಾಡು. ಏಕೆಂದರೆ ಯೆಹೋವ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.</verse>
				<verse number="4">ಅದೇ ರಾತ್ರಿಯಲ್ಲಿ ಯೆಹೋವ ದೇವರ ವಾಕ್ಯವು ನಾತಾನನಿಗೆ ಉಂಟಾಗಿ,</verse>
				<verse number="5">“ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ, ‘ಯೆಹೋವ ದೇವರು ಹೇಳುವುದೇನೆಂದರೆ: ನಾನು ವಾಸವಾಗಿರುವುದಕ್ಕೆ ನೀನು ನನಗೆ ಆಲಯವನ್ನು ಕಟ್ಟಬೇಕೆಂದಿರುವೆಯೋ?</verse>
				<verse number="6">ನಿಶ್ಚಯವಾಗಿ ನಾನು ಈಜಿಪ್ಟಿನಿಂದ ಇಸ್ರಾಯೇಲರನ್ನು ಬರಮಾಡಿದ ದಿವಸ ಮೊದಲುಗೊಂಡು ಇಂದಿನವರೆಗೂ ಆಲಯದಲ್ಲಿ ವಾಸಮಾಡದೆ ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆನು.</verse>
				<verse number="7">ನಾನು ನನ್ನ ಜನರಾದ ಇಸ್ರಾಯೇಲರನ್ನು ಪರಿಪಾಲಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಜೊತೆಯಾದರೂ, “ನೀವು ನನಗೆ ದೇವದಾರು ಮನೆಯನ್ನು ಏಕೆ ಕಟ್ಟಲಿಲ್ಲ,” ಎಂದು, ನಾನು ಸಮಸ್ತ ಇಸ್ರಾಯೇಲಿನ ಸಂಗಡ ಸಂಚರಿಸಿದ ಯಾವ ಸ್ಥಳದಲ್ಲಾದರೂ, ಯಾವಾಗಲಾದರೂ ಕೇಳಿದೆನೋ?’</verse>
				<verse number="8">“ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, ‘ಸೇನಾಧೀಶ್ವರ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ: ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡು, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿರುವಂತೆ ನೇಮಿಸಿದೆನು.</verse>
				<verse number="9">ನೀನು ಎಲ್ಲಿ ಹೋದರೂ, ಅಲ್ಲಿ ನಿನ್ನ ಸಂಗಡ ಇದ್ದು, ನಿನ್ನ ಶತ್ರುಗಳನ್ನೆಲ್ಲಾ ನಿನ್ನ ಮುಂದೆಯೇ ಸಂಹರಿಸಿದೆನು. ಭೂಮಿಯಲ್ಲಿರುವ ಮಹಾಪುರುಷರ ಹೆಸರಿನ ಹಾಗೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು.</verse>
				<verse number="10">ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಏರ್ಪಡಿಸಿ, ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಲೆಗೊಳಿಸುವೆನು.</verse>
				<verse number="11">ಪೂರ್ವಕಾಲದಲ್ಲಿ ನಾನು ನನ್ನ ಜನರಾದ ಇಸ್ರಾಯೇಲರ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದ ಆ ದಿವಸದಿಂದ ಈಚೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಮೇಲೆ ಕುಗ್ಗಿಸದೆ ಇರುವರು. “ ‘ನಿನ್ನನ್ನು, ನಿನ್ನ ಸಮಸ್ತ ಶತ್ರುಗಳಿಂದ ತಪ್ಪಿಸಿ, ನಿನಗೆ ವಿಶ್ರಾಂತಿಯನ್ನು ಉಂಟುಮಾಡುವೆನು. ಇದಲ್ಲದೆ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ, ನಾನು ನಿನ್ನ ರಾಜವಂಶವನ್ನು ಸ್ಥಿರಪಡಿಸುವೆನು.</verse>
				<verse number="12">ನಿನ್ನ ಆಯುಷ್ಕಾಲವು ಮುಗಿದ ಮೇಲೆ ನೀನು ನಿನ್ನ ಪಿತೃಗಳ ಜೊತೆ ವಿಶ್ರಮಿಸುವಾಗ, ನಾನು ನಿನ್ನ ಸಂತತಿಯಲ್ಲಿ ಒಬ್ಬನನ್ನು ನಿನ್ನ ಉತ್ತರಾಧಿಕಾರಿಯನ್ನಾಗಿ ನೇಮಿಸಿ, ಅವನ ರಾಜ್ಯವನ್ನು ಸ್ಥಿರಮಾಡುವೆನು.</verse>
				<verse number="13">ಅವನೇ ನನ್ನ ಹೆಸರಿಗಾಗಿ ದೇವಾಲಯನ್ನು ಕಟ್ಟುವನು. ನಾನು ಅವನ ರಾಜಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು.</verse>
				<verse number="14">ನಾನು ಆತನ ತಂದೆಯಾಗಿರುವೆನು. ಆತನು ನನಗೆ ಮಗನಾಗಿರುವನು. ಅವನು ಕೆಟ್ಟದ್ದನ್ನು ಮಾಡಿದರೆ, ನಾನು ಅವನನ್ನು ಮನುಷ್ಯರಿಂದ ಬೆಸುಗೆ ಹಾಕಿದ ಕೋಲಿನಿಂದಲೂ ಮನುಷ್ಯರ ಕೈಗಳಿಂದ ಹೊಡೆದ ಹೊಡೆತದಿಂದ ದಂಡಿಸುವೆನು.</verse>
				<verse number="15">ಆದರೆ ಸೌಲನ ಮೇಲಿದ್ದ ನನ್ನ ಪ್ರೀತಿಯನ್ನು ಹಿಂತೆಗೆದುಕೊಂಡ ಹಾಗೆ, ಎಂದಿಗೂ ಅವನಿಂದ ಹಿಂತೆಗೆಯುವುದಿಲ್ಲ. ನಾನು ಸೌಲನನ್ನು ನಿನ್ನ ಮುಂದೆಯೇ ಹೊರಡಿಸಿಬಿಟ್ಟೆನಲ್ಲಾ.</verse>
				<verse number="16">ನಿನ್ನ ಮನೆಯೂ ನಿನ್ನ ರಾಜ್ಯವೂ ನನ್ನ ಮುಂದೆ ಸದಾಕಾಲಕ್ಕೂ ಸ್ಥಿರವಾಗಿರುವವು. ನಿನ್ನ ಸಿಂಹಾಸನವು ಯುಗಯುಗಾಂತರಕ್ಕೂ ಶಾಶ್ವತವಾಗಿರುವುದು,’ ” ಎಂದು ಹೇಳಿದರು.</verse>
				<verse number="17">ನಾತಾನನು ಈ ಸಮಸ್ತ ಪ್ರಕಟಣೆಯ ಮಾತುಗಳನ್ನು ದಾವೀದನಿಗೆ ತಿಳಿಸಿದನು.</verse>
				<verse number="18">ಅನಂತರ ಅರಸನಾದ ದಾವೀದನು ಒಳಗೆ ಪ್ರವೇಶಿಸಿ, ಯೆಹೋವ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, “ಸಾರ್ವಭೌಮ ಯೆಹೋವ ದೇವರೇ, ನನ್ನಂಥವನಿಗೆ ನೀವು ಈ ಪದವಿಯನ್ನು ಅನುಗ್ರಹಿಸಿ, ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು? ನನ್ನ ಕುಟುಂಬ ಎಷ್ಟರದು?</verse>
				<verse number="19">ಸಾರ್ವಭೌಮ ಯೆಹೋವ ದೇವರೇ, ಇದು ನಿಮ್ಮ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನೀವು ನಿಮ್ಮ ಸೇವಕನ ಸಂತಾನದ ಭವಿಷ್ಯದ ಕುರಿತೂ ವಾಗ್ದಾನಮಾಡಿರುವಿರಿ. ಸಾರ್ವಭೌಮ ಯೆಹೋವ ದೇವರೇ, ಇದು ನೀವು ಮನುಷ್ಯನೊಂದಿಗೆ ವರ್ತಿಸುವ ಕ್ರಮ.</verse>
				<verse number="20">“ದಾವೀದನು ಇನ್ನೂ ಹೆಚ್ಚಾಗಿ ಹೇಳಿಕೊಳ್ಳುವುದೇನಿದೆ? ಏಕೆಂದರೆ ನೀವು ನಿಮ್ಮ ಸೇವಕನನ್ನು ಚೆನ್ನಾಗಿ ಬಲ್ಲಿರಿ; ಓ ಸಾರ್ವಭೌಮ ಯೆಹೋವ ದೇವರೇ,</verse>
				<verse number="21">ನಿಮ್ಮ ವಾಕ್ಯದ ನಿಮಿತ್ತವಾಗಿಯೂ ನಿಮ್ಮ ಚಿತ್ತಾನುಸಾರವಾಗಿಯೂ ನಿಮ್ಮ ಸೇವಕನಿಗೆ ತಿಳಿಯಪಡಿಸುವ ಹಾಗೆ ಈ ಮಹಾಕಾರ್ಯಗಳನ್ನೆಲ್ಲಾ ಮಾಡಿದಿರಿ.</verse>
				<verse number="22">“ಸಾರ್ವಭೌಮ ಯೆಹೋವ ದೇವರೇ, ನೀವು ಮಹೋನ್ನತರಾಗಿದ್ದೀರಿ. ನಮ್ಮ ಕಿವಿಗಳಿಂದ ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿಮ್ಮ ಹಾಗೆ ಯಾರೂ ಇಲ್ಲ; ನಿಮ್ಮ ಹೊರತು ದೇವರು ಯಾರೂ ಇಲ್ಲ.</verse>
				<verse number="23">ಭೂಲೋಕದಲ್ಲಿ ನಿಮ್ಮ ಜನರಾದ ಇಸ್ರಾಯೇಲರಿಗೆ ಸಮಾನವಾದ ಜನಾಂಗ ಯಾವುದು? ನೀವೇ ಹೋಗಿ ಅವರನ್ನು ಸ್ವಜನರಾಗಿ ವಿಮೋಚಿಸಿ ನಿಮ್ಮ ಹೆಸರನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟಿನಿಂದ ವಿಮೋಚಿಸಿ ತಂದ ನಿಮ್ಮ ಪ್ರಜೆಗಳ ಎದುರಿನಿಂದ ಜನಾಂಗಗಳನ್ನು ಮತ್ತು ಅವರ ದೇವರುಗಳನ್ನು ಓಡಿಸುವ ಮೂಲಕ ವಿಸ್ಮಯಕರವಾದ ಮಹಾ ಅದ್ಭುತಗಳನ್ನು ಮಾಡಿದ್ದೀರಲ್ಲವೇ?</verse>
				<verse number="24">ದೇವರಾದ ಯೆಹೋವ ದೇವರೇ, ಇಸ್ರಾಯೇಲ್ ಜನರನ್ನು ಶಾಶ್ವತವಾಗಿ ನಿಮ್ಮ ಸ್ವಂತ ಜನರಾಗಿ ಇರುವ ಹಾಗೆ ಸ್ಥಿರಪಡಿಸಿದಿರಿ; ಯೆಹೋವ ದೇವರೇ, ನೀವೇ ಅವರಿಗೆ ದೇವರಾದಿರಿ.</verse>
				<verse number="25">“ಈಗ ದೇವರಾದ ಯೆಹೋವ ದೇವರೇ, ನೀವು ನಿಮ್ಮ ಸೇವಕನನ್ನು ಕುರಿತೂ, ಅವನ ಕುಟುಂಬವನ್ನು ಕುರಿತೂ ಮಾಡಿದ ವಾಗ್ದಾನವನ್ನು ನೆರವೇರಿಸಿ ಅದನ್ನು ಶಾಶ್ವತವಾಗಿ ಸ್ಥಿರಪಡಿಸಿರಿ.</verse>
				<verse number="26">ಹೀಗೆ ನಿಮ್ಮ ಹೆಸರು ಎಂದೆಂದಿಗೂ ಶ್ರೇಷ್ಠವಾಗಿರುತ್ತದೆ. ಆಗ ಜನರು, ‘ಸೇನಾಧೀಶ್ವರ ಯೆಹೋವ ದೇವರು ಇಸ್ರಾಯೇಲರ ದೇವರು,’ ಎಂದು ಹೇಳುವರು. ಇದಲ್ಲದೆ ನಿಮ್ಮ ಸೇವಕನಾದ ದಾವೀದನ ಮನೆಯು ನಿಮ್ಮ ಮುಂದೆ ಸ್ಥಿರವಾಗಿರುವುದು.</verse>
				<verse number="27">“ಸೇನಾಧೀಶ್ವರ ಯೆಹೋವ ದೇವರೇ, ಇಸ್ರಾಯೇಲಿನ ದೇವರೇ, ‘ನಾನು ನಿಮಗೆ ಮನೆಯನ್ನು ಕಟ್ಟುವೆನೆಂದು’ ನಿಮ್ಮ ಸೇವಕನಿಗೆ ಪ್ರಕಟ ಮಾಡಿದ್ದರಿಂದ, ನಿಮ್ಮನ್ನು ಕುರಿತು ಈ ಪ್ರಾರ್ಥನೆಯನ್ನು ಪ್ರಾರ್ಥಿಸುವುದಕ್ಕೆ ನಿಮ್ಮ ಸೇವಕನ ಹೃದಯದಲ್ಲಿ ಧೈರ್ಯ ಉಂಟಾಯಿತು.</verse>
				<verse number="28">ಸಾರ್ವಭೌಮ ಯೆಹೋವ ದೇವರೇ, ನಿಮ್ಮ ವಾಕ್ಯಗಳು ಸತ್ಯವಾದದ್ದು. ನಿಮ್ಮ ಸೇವಕನಿಗೆ ಈ ಒಳ್ಳೆಯ ಸಂಗತಿಗಳನ್ನು ವಾಗ್ದಾನಮಾಡಿದ ನೀವು ದೇವರಾಗಿದ್ದೀರಿ.</verse>
				<verse number="29">ಆದಕಾರಣ ಈಗ ನಿಮ್ಮ ಸೇವಕನ ಮನೆಯು ನಿಮ್ಮ ಮುಂದೆ ಶಾಶ್ವತವಾಗಿ ಇರುವ ಹಾಗೆ ಅದನ್ನು ಆಶೀರ್ವದಿಸಲು ಸಂತೋಷಪಡಿರಿ. ಸಾರ್ವಭೌಮ ಯೆಹೋವ ದೇವರೇ, ಅದನ್ನು ಹೇಳಿದವರು ನೀವೇ; ನಿಮ್ಮ ಆಶೀರ್ವಾದದಿಂದ ನಿಮ್ಮ ಸೇವಕನ ಮನೆಯಲ್ಲಿ ನಿತ್ಯವೂ ಸೌಭಾಗ್ಯವಿರಲಿ.”</verse>
			</chapter>
			<chapter number="8">
				<verse number="1">ಇದರ ತರುವಾಯ ದಾವೀದನು ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿ, ಅವರಿಂದ ಮೇತೆಗ್ ಅಮ್ಮಹವನ್ನು ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.</verse>
				<verse number="2">ಹಾಗೆಯೇ ದಾವೀದನು ಮೋವಾಬ್ಯರನ್ನು ಸಹ ಸೋಲಿಸಿದನು. ಸೆರೆಯಾಳುಗಳನ್ನು ನೆಲದ ಮೇಲೆ ಹಗ್ಗದಿಂದ ಅಳತೆ ಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ, ಒಂದು ಪಾಲನ್ನು ಉಳಿಸಿದನು. ಹೀಗೆ ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು.</verse>
				<verse number="3">ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿರುವಾಗ, ಚೋಬದ ಅರಸನಾದ ರೆಹೋಬನ ಮಗ ಹದದೆಜೆರನನ್ನು ಸೋಲಿಸಿದನು.</verse>
				<verse number="4">ದಾವೀದನು ಅವನಿಂದ ಸಾವಿರ ರಥಗಳನ್ನೂ, ಏಳು ಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ವಶಪಡಿಸಿಕೊಂಡನು. ನೂರು ರಥಗಳಿಗೆ ಕುದುರೆಗಳನ್ನು ಉಳಿಸಿ, ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ಯಿಸಿಬಿಟ್ಟನು.</verse>
				<verse number="5">ದಮಸ್ಕದ ಅರಾಮ್ಯರು ಚೋಬದ ಅರಸ ಹದದೆಜೆರನಿಗೆ ಸಹಾಯಮಾಡಲು ಬಂದಾಗ, ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸಂಹರಿಸಿಬಿಟ್ಟನು.</verse>
				<verse number="6">ತರುವಾಯ ದಾವೀದನು ದಮಸ್ಕದ ಅರಾಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಹೀಗೆ ಅರಾಮ್ಯರು ದಾವೀದನಿಗೆ ಅಧೀನರಾಗಿ, ಕಪ್ಪವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.</verse>
				<verse number="7">ದಾವೀದನು ಹದದೆಜೆರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು, ಅವುಗಳನ್ನು ಯೆರೂಸಲೇಮಿಗೆ ತಂದನು.</verse>
				<verse number="8">ಇದಲ್ಲದೆ ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ, ಬೇರೋತೈಯಿಂದಲೂ ಅರಸನಾದ ದಾವೀದನು ಅತ್ಯಧಿಕವಾಗಿ ಕಂಚನ್ನು ತೆಗೆದುಕೊಂಡು ಬಂದನು.</verse>
				<verse number="9">ದಾವೀದನು ಹದದೆಜೆರನ ಸಮಸ್ತ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವನ್ನು ಹಮಾತಿನ ಅರಸನಾದ ತೋವು ಕೇಳಿದಾಗ,</verse>
				<verse number="10">ಅವನು ಅರಸನಾದ ದಾವೀದನ ಕ್ಷೇಮಸಮಾಚಾರವನ್ನು ವಿಚಾರಿಸಲೂ, ಹದದೆಜೆರನ ವಿರುದ್ಧ ಯುದ್ಧಮಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಅವನನ್ನು ಅಭಿನಂದಿಸಿ, ಹರಸುವಂತೆ, ತೋವು ತನ್ನ ಪುತ್ರನಾದ ಯೋರಾಮನನ್ನು ಬೆಳ್ಳಿ, ಬಂಗಾರ, ಕಂಚಿನ ಪಾತ್ರೆಗಳ ಸಹಿತವಾಗಿ ದಾವೀದನ ಬಳಿಗೆ ಕಳುಹಿಸಿದನು; ಏಕೆಂದರೆ ಹದದೆಜೆರನಿಗೆ ತೋವಿಯ ಸಂಗಡ ಯುದ್ಧಗಳಿದ್ದವು.</verse>
				<verse number="11">ಅರಸನಾದ ದಾವೀದನು ಚಿನ್ನ, ಬೆಳ್ಳಿ ಮತ್ತು ಕಂಚಿನ ಎಲ್ಲಾ ವಸ್ತುಗಳನ್ನು ಯೆಹೋವ ದೇವರಿಗೆ ಸಮರ್ಪಿಸಿದನು. ಜೊತೆಗೆ ಅವನು ಸೋತ ಎಲ್ಲಾ ದೇಶಗಳಿಂದ ವಶಪಡಿಸಿಕೊಂಡ ವಸ್ತುಗಳನ್ನೂ ಅರ್ಪಿಸಿದನು.</verse>
				<verse number="12">ಅಂದರೆ, ಅರಾಮ್ಯರು, ಮೋವಾಬ್ಯರು, ಅಮ್ಮೋನ್ಯರು, ಫಿಲಿಷ್ಟಿಯರು, ಅಮಾಲೇಕ್ಯರು ಮತ್ತು ಚೋಬದ ಅರಸನಾಗಿರುವ ರೆಹೋಬನ ಮಗನಾದ ಹದದೆಜೆರನ ಬಳಿಯಿಂದ ಪಡೆದ ಕೊಳ್ಳೆಯನ್ನೂ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದನು.</verse>
				<verse number="13">ದಾವೀದನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಅರಾಮ್ಯರನ್ನು ಹೊಡೆದು ಹಿಂದಿರುಗಿದಾಗ ಪ್ರಖ್ಯಾತಿ ಹೊಂದಿದನು.</verse>
				<verse number="14">ಸಮಸ್ತ ಎದೋಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಇದರಿಂದ, ಎದೋಮ್ಯರೆಲ್ಲರು ದಾವೀದನಿಗೆ ಅಧೀನರಾದರು. ದಾವೀದನು ಹೋದಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.</verse>
				<verse number="15">ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ ತನ್ನ ಸಮಸ್ತ ಜನರಿಗೂ ನೀತಿ ನ್ಯಾಯಗಳಿಂದ ನಡೆಸುತ್ತಿದ್ದನು.</verse>
				<verse number="16">ಚೆರೂಯಳ ಮಗ ಯೋವಾಬನು ಸೈನ್ಯದ ಅಧಿಪತಿಯಾಗಿದ್ದನು. ಅಹೀಲೂದನ ಮಗ ಯೆಹೋಷಾಫಾಟನು ಆಸ್ಥಾನದ ಆಗುಹೋಗುಗಳನ್ನು ದಾಖಲಿಸುವವನಾಗಿದ್ದನು.</verse>
				<verse number="17">ಅಹೀಟೂಬನ ಮಗ ಚಾದೋಕನೂ ಅಬಿಯಾತರನ ಮಗ ಅಹೀಮೆಲೆಕನೂ ಯಾಜಕರಾಗಿದ್ದರು. ಸೆರಾಯನು ಕಾರ್ಯದರ್ಶಿಯಾಗಿದ್ದನು.</verse>
				<verse number="18">ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು. ದಾವೀದನ ಪುತ್ರರು ಸಮಾಲೋಚಕರಾಗಿದ್ದರು.</verse>
			</chapter>
			<chapter number="9">
				<verse number="1">ದಾವೀದನು, “ಸೌಲನ ಕುಟುಂಬದಲ್ಲಿ ಯೋನಾತಾನನಿಗೋಸ್ಕರ ನಾನು ಅವನಿಗೆ ದಯೆ ತೋರಿಸುವ ಹಾಗೆ ಇನ್ನೂ ಯಾವನಾದರೂ ಉಳಿದಿದ್ದಾನೋ?” ಎಂದು ಕೇಳಿದನು.</verse>
				<verse number="2">ಆಗ ಸೌಲನ ಮನೆಯ ದಾಸನಾದ ಚೀಬನೆಂಬವನು ಇದ್ದನು. ಅವನನ್ನು ದಾವೀದನ ಬಳಿಗೆ ಕರೆತಂದರು. ಅರಸನು ಅವನಿಗೆ, “ನೀನು ಚೀಬನೋ?” ಎಂದನು. ಅದಕ್ಕವನು, “ನಿನ್ನ ದಾಸನು ನಾನೇ,” ಎಂದನು.</verse>
				<verse number="3">ಅರಸನು, “ನಾನು ದೇವರ ದಯೆ ತೋರಿಸುವ ಹಾಗೆ ಸೌಲನ ಕುಟುಂಬದಲ್ಲಿ ಇನ್ನೂ ಯಾವನಾದರೂ ಇದ್ದಾನೋ?” ಎಂದನು. ಆಗ ಚೀಬನು ಅರಸನಿಗೆ, “ಯೋನಾತಾನನಿಗೆ ಎರಡೂ ಕಾಲು ಕುಂಟಾದ ಮಗನಿದ್ದಾನೆ,” ಎಂದನು.</verse>
				<verse number="4">“ಅವನು ಎಲ್ಲಿ ಇದ್ದಾನೆ?” ಎಂದು ಅರಸನು ಅವನನ್ನು ಕೇಳಿದನು. ಚೀಬನು ಅರಸನಿಗೆ, “ಅವನು ಲೋದೆಬಾರಲ್ಲಿ ಅಮ್ಮಿಯೇಲನ ಮಗ ಮಾಕೀರನ ಮನೆಯಲ್ಲಿ ಇದ್ದಾನೆ,” ಎಂದನು.</verse>
				<verse number="5">ಆಗ ಅರಸ ದಾವೀದನು ಲೋದೆಬಾರಿನಲ್ಲಿರುವ ಅಮ್ಮಿಯೇಲನ ಮಗ ಮಾಕೀರನ ಮನೆಯಿಂದ ಅವನನ್ನು ಕರೆಯಕಳುಹಿಸಿದನು.</verse>
				<verse number="6">ಸೌಲನ ಮಗನಾಗಿರುವ ಯೋನಾತಾನನ ಮಗ ಮೆಫೀಬೋಶೆತನು ದಾವೀದನ ಬಳಿಗೆ ಬಂದಾಗ, ಮೋರೆ ಕೆಳಗಾಗಿ ಬಿದ್ದು ವಂದಿಸಿದನು. ದಾವೀದನು, “ಮೆಫೀಬೋಶೆತನೇ,” ಎಂದನು. ಅವನು, “ಇಗೋ, ನಿನ್ನ ದಾಸನು,” ಎಂದನು.</verse>
				<verse number="7">ಆಗ ದಾವೀದನು ಅವನಿಗೆ, “ಭಯಪಡಬೇಡ, ಏಕೆಂದರೆ ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆ ತೋರಿಸುವೆನು. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರುಗಿ ಕೊಡುವೆನು ಮತ್ತು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವೆ,” ಎಂದನು.</verse>
				<verse number="8">ಆಗ ಅವನು ಅಡ್ಡಬಿದ್ದು, “ನೀನು ನನ್ನಂಥ ಸತ್ತ ನಾಯಿಯನ್ನು ದೃಷ್ಟಿಸುವ ಹಾಗೆ ನಿನ್ನ ದಾಸನು ಎಷ್ಟರವನು,” ಎಂದನು.</verse>
				<verse number="9">ಅನಂತರ ದಾವೀದನು ಸೌಲನ ಸೇವಕನಾದ ಚೀಬನನ್ನು ಕರೆದು, “ನಿನ್ನ ಯಜಮಾನ ಸೌಲನಿಗೂ, ಅವನ ಕುಟುಂಬದವರಿಗೂ ಇದ್ದ ಎಲ್ಲವನ್ನು ಅವನ ಮೊಮ್ಮಗನಿಗೆ ಕೊಟ್ಟಿರುತ್ತೇನೆ.</verse>
				<verse number="10">ಆದ್ದರಿಂದ ನೀನೂ, ನಿನ್ನ ಪುತ್ರರೂ, ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ, ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ, ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮೊಮ್ಮಗ ಮೆಫೀಬೋಶೆತನು ನಿತ್ಯವೂ ನನ್ನ ಮೇಜಿನಲ್ಲಿ ಊಟಮಾಡುವನು,” ಎಂದನು. ಈ ಚೀಬನಿಗೆ ಹದಿನೈದು ಮಂದಿ ಪುತ್ರರೂ ಇಪ್ಪತ್ತು ಮಂದಿ ದಾಸರೂ ಇದ್ದರು.</verse>
				<verse number="11">ಆಗ ಚೀಬನು ಅರಸನಿಗೆ, “ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು,” ಎಂದನು. ಅರಸನ ಪುತ್ರರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು.</verse>
				<verse number="12">ಮೆಫೀಬೋಶೆತನಿಗೆ ಮೀಕನೆಂಬ ಹೆಸರುಳ್ಳ ಒಬ್ಬ ಮಗನಿದ್ದನು. ಚೀಬನ ಮನೆಯಲ್ಲಿ ವಾಸವಾಗಿದ್ದ ಸಮಸ್ತರೂ ಮೆಫೀಬೋಶೆತನಿಗೆ ದಾಸರಾಗಿದ್ದರು.</verse>
				<verse number="13">ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದ್ದುದರಿಂದ ಯೆರೂಸಲೇಮಿನಲ್ಲೇ ವಾಸವಾಗಿದ್ದನು. ಅವನಿಗೆ ಎರಡೂ ಕಾಲು ಕುಂಟಾಗಿದ್ದವು.</verse>
			</chapter>
			<chapter number="10">
				<verse number="1">ಇದರ ತರುವಾಯ, ಅಮ್ಮೋನಿಯರ ಅರಸನು ಮರಣಹೊಂದಿದನು. ಅವನಿಗೆ ಬದಲಾಗಿ ಅವನ ಮಗ ಹಾನೂನನು ಅರಸನಾದನು.</verse>
				<verse number="2">ಆಗ ದಾವೀದನು, “ಹಾನೂನನ ತಂದೆಯಾದ ನಾಹಾಷನು ನನಗೆ ದಯೆ ತೋರಿಸಿದ್ದರಿಂದ, ನಾನೂ ಅವನ ಮಗ ಹಾನೂನನಿಗೆ ದಯೆ ತೋರಿಸುವೆನು,” ಎಂದನು. ದಾವೀದನು ಅವನ ತಂದೆಯನ್ನು ಕುರಿತು ಹಾನೂನನಿಗೆ ಸಂತಾಪ ಸೂಚಿಸಲು ತನ್ನ ಸೇವಕರನ್ನು ಕಳುಹಿಸಿದನು. ಹೀಗೆಯೇ ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಬಂದರು.</verse>
				<verse number="3">ಆಗ ಅಮ್ಮೋನಿಯರ ಪ್ರಧಾನರು ತಮ್ಮ ಯಜಮಾನನಾದ ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತಾಪ ಸೂಚಿಸುವವರನ್ನು ಕಳುಹಿಸಿದ್ದರಿಂದ, ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ಯೋಚಿಸುತ್ತೀಯೋ? ದಾವೀದನು ತನ್ನ ಸೇವಕರನ್ನು ಈ ಪಟ್ಟಣವನ್ನು ಸಂಚರಿಸಿ ನೋಡುವುದಕ್ಕೂ ಶೋಧಿಸುವುದಕ್ಕೂ ಅದನ್ನು ಕೆಡವಿ ಹಾಕುವುದಕ್ಕೂ ನಿನ್ನ ಬಳಿಗೆ ಕಳುಹಿಸಿದ್ದಾನಲ್ಲವೇ,” ಎಂದರು.</verse>
				<verse number="4">ಆದ್ದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು, ಅವರ ಅರ್ಧ ಗಡ್ಡವನ್ನು ಬೋಳಿಸಿ, ಅವರ ವಸ್ತ್ರಗಳನ್ನು ಬೆನ್ನ ಹಿಂದೆ ಮಧ್ಯದಿಂದ ಸೊಂಟದ ಕೆಳಗಿನವರೆಗೂ ಕತ್ತರಿಸಿ, ಅವರನ್ನು ಕಳುಹಿಸಿಬಿಟ್ಟನು.</verse>
				<verse number="5">ಅವರು ಈ ವಿಷಯದ ಕುರಿತು ದಾವೀದನಿಗೆ ಹೇಳಿ ಕಳುಹಿಸಿದಾಗ, ಬಹಳ ಅಪಮಾನ ಹೊಂದಿದ ಅವರಿಗೆ ದಾವೀದನು ತನ್ನ ಆಳುಗಳನ್ನು ಅವರಿಗೆದುರಾಗಿ ಕಳುಹಿಸಿ, “ನಿಮ್ಮ ಗಡ್ಡಗಳು ಬೆಳೆಯುವವರೆಗೂ ಯೆರಿಕೋವಿನಲ್ಲಿ ಇರಿ. ಆಮೇಲೆ ತಿರುಗಿ ಬನ್ನಿರಿ” ಎಂದು ಹೇಳಿಸಿದನು.</verse>
				<verse number="6">ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅವರು ದೂತರನ್ನು ಕಳುಹಿಸಿ ಬೇತ್‌ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಇರುವ ಇಪ್ಪತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ, ಟೋಬ್ ದೇಶದಿಂದ ಹನ್ನೆರಡು ಸಾವಿರ ಜನರನ್ನೂ, ಮಾಕದ ಅರಸನನ್ನೂ ಅವನ ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.</verse>
				<verse number="7">ದಾವೀದನು ಇದನ್ನು ಕೇಳಿದಾಗ, ಅವನು ಯೋವಾಬನನ್ನೂ, ಪರಾಕ್ರಮಶಾಲಿಗಳಾದ ಸಮಸ್ತ ಸೈನಿಕರನ್ನೂ ಕಳುಹಿಸಿದನು.</verse>
				<verse number="8">ಆಗ ಅಮ್ಮೋನಿಯರು ಹೊರಟು ಪಟ್ಟಣದ ದ್ವಾರದ ಹತ್ತಿರ ವ್ಯೂಹ ಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬಿನಿಂದಲೂ ಟೋಬಿನಿಂದಲೂ ಮಾಕಾನಿಂದಲೂ ಬಂದ ಅರಾಮ್ಯರು ಪ್ರತ್ಯೇಕವಾಗಿ ಬೈಲಿನಲ್ಲಿ ಇಳಿದುಕೊಂಡಿದ್ದರು.</verse>
				<verse number="9">ಯೋವಾಬನು, ಯುದ್ಧವು ತನ್ನ ವಿರೋಧವಾಗಿ ಹಿಂದೆಯೂ, ಮುಂದೆಯೂ ಇರುವುದನ್ನು ಕಂಡಾಗ, ಅವನು ಇಸ್ರಾಯೇಲಿನ ಎಲ್ಲಾ ಶ್ರೇಷ್ಠ ಸೈನಿಕರನ್ನು ಆಯ್ದುಕೊಂಡು, ಅರಾಮ್ಯರಿಗೆ ಎದುರಾಗಿ ನಿಲ್ಲಿಸಿದನು.</verse>
				<verse number="10">ಉಳಿದ ಜನರನ್ನು ಅಮ್ಮೋನಿಯರಿಗೆದುರಾಗಿ ವ್ಯೂಹ ಕಟ್ಟುವ ಹಾಗೆ, ಅವರನ್ನು ತನ್ನ ತಮ್ಮನಾದ ಅಬೀಷೈಯನ ಕೈಯಲ್ಲಿ ಒಪ್ಪಿಸಿಕೊಟ್ಟು,</verse>
				<verse number="11">ಅವನಿಗೆ ಯೋವಾಬನು, “ಅರಾಮ್ಯರು ನನಗಿಂತ ಬಲವುಳ್ಳವರಾದರೆ, ನೀನು ನನಗೆ ಸಹಾಯಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳವರಾದರೆ, ನಾನು ಬಂದು ನಿನಗೆ ಸಹಾಯ ಮಾಡುವೆನು.</verse>
				<verse number="12">ದೃಢವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಧೈರ್ಯವಾಗಿ ಹೋರಾಡೋಣ, ಯೆಹೋವ ದೇವರು ತಮ್ಮ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ,” ಎಂದನು.</verse>
				<verse number="13">ಆಗ ಯೋವಾಬನೂ, ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ದಾಳಿಮಾಡಲು ಹತ್ತಿರವಾದಾಗ, ಅರಾಮ್ಯರು ಓಡಿಹೋದರು.</verse>
				<verse number="14">ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನಿಯರು ಕಂಡಾಗ, ಅವರು ಅಬೀಷೈಯನ ಎದುರಿನಿಂದ ಓಡಿಹೋಗಿ ಪಟ್ಟಣದೊಳಗೆ ಅಡಗಿಕೊಂಡರು. ಆಗ ಯೋವಾಬನು ಅಮ್ಮೋನಿಯರೊಡನೆ ಯುದ್ಧಮಾಡುವುದನ್ನು ಬಿಟ್ಟು, ಯೆರೂಸಲೇಮಿಗೆ ತಿರುಗಿಹೋದನು.</verse>
				<verse number="15">ಅರಾಮ್ಯರಿಗೆ ತಾವು ಇಸ್ರಾಯೇಲರಿಂದ ಸೋತುಹೋದೆವೆಂದು ತಿಳಿದಾಗ, ಅವರೆಲ್ಲರು ಒಟ್ಟಾಗಿ ಕೂಡಿಬಂದರು.</verse>
				<verse number="16">ಹದದೆಜೆರನು ನದಿಯ ಆಚೆಯಲ್ಲಿರುವ ಇತರ ಅರಾಮ್ಯರನ್ನು ಕರೆಯಿಸಿಕೊಂಡದ್ದರಿಂದ ಅವರು ಹೆಲಾಮಿಗೆ ಬಂದರು. ಹದದೆಜೆರನ ಸೇನಾಧಿಪತಿಯಾದ ಶೋಬಕನು ಅವರ ನಾಯಕನಾದನು.</verse>
				<verse number="17">ಅದನ್ನು ದಾವೀದನಿಗೆ ತಿಳಿಸಿದಾಗ, ಅವನು ಸಮಸ್ತ ಇಸ್ರಾಯೇಲರನ್ನು ಕೂಡಿಸಿಕೊಂಡು, ಯೊರ್ದನನ್ನು ದಾಟಿ ಹೆಲಾಮಿಗೆ ಬಂದನು. ಅರಾಮ್ಯರು ದಾವೀದನಿಗೆದುರಾಗಿ ವ್ಯೂಹ ಕಟ್ಟಿ ಯುದ್ಧಮಾಡಿದರು.</verse>
				<verse number="18">ಆಗ ಅರಾಮ್ಯರು ಇಸ್ರಾಯೇಲರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ನೂರು ರಥಗಳನ್ನೂ ಹಾಳು ಮಾಡಿ, ನಲವತ್ತು ಸಾವಿರ ಕಾಲಾಳುಗಳನ್ನೂ ಕೊಂದು, ಅವರ ಸೇನಾಧಿಪತಿಯಾದ ಶೋಬಕನನ್ನು ಹೊಡೆದನು; ಅವನು ಅಲ್ಲಿಯೇ ಮರಣಹೊಂದಿದನು.</verse>
				<verse number="19">ಹದದೆಜೆರನ ಸೇವಕರಾದ ಸಮಸ್ತ ಅರಸರು ತಾವು ಇಸ್ರಾಯೇಲರ ಮುಂದೆ ಸೋತುಹೋದದ್ದನ್ನು ಕಂಡಾಗ, ಅವರು ಇಸ್ರಾಯೇಲರ ಸಂಗಡ ಸಂಧಾನ ಮಾಡಿಕೊಂಡು ಅವರಿಗೆ ಅಧೀನರಾದರು. ತರುವಾಯ ಅರಾಮ್ಯರು ಅಮ್ಮೋನಿಯರಿಗೆ ಮತ್ತೆ ಸಹಾಯ ಮಾಡುವುದಕ್ಕೆ ಭಯಪಟ್ಟರು.</verse>
			</chapter>
			<chapter number="11">
				<verse number="1">ಮರು ವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ ದಾವೀದನು ಯೋವಾಬನನ್ನೂ, ಅವನ ಸಂಗಡದಲ್ಲಿದ್ದ ಅವನ ಸೇವಕರನ್ನೂ, ಸಮಸ್ತ ಇಸ್ರಾಯೇಲರನ್ನೂ ಕಳುಹಿಸಿದನು. ಅವರು ಅಮ್ಮೋನಿಯರ ಪ್ರಾಂತಗಳನ್ನು ಹಾಳು ಮಾಡಿ ರಬ್ಬ ನಗರಕ್ಕೆ ಮುತ್ತಿಗೆ ಹಾಕಿದರು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು.</verse>
				<verse number="2">ದಾವೀದನು ಒಂದು ದಿನ ಸಾಯಂಕಾಲದಲ್ಲಿ ತನ್ನ ಹಾಸಿಗೆಯಿಂದ ಎದ್ದು, ಅರಮನೆಯ ಉಪ್ಪರಿಗೆಯ ಮೇಲೆ ತಿರುಗಾಡುತ್ತಾ ಇದ್ದು, ಸ್ನಾನ ಮಾಡುತ್ತಿರುವ ಒಬ್ಬ ಸ್ತ್ರೀಯನ್ನು ಕಂಡನು.</verse>
				<verse number="3">ಆ ಸ್ತ್ರೀಯು ಬಹು ಸೌಂದರ್ಯವುಳ್ಳ ರೂಪವತಿಯಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವುದಕ್ಕೆ ಕಳುಹಿಸಿದಾಗ ಒಬ್ಬನು, “ಅವಳು ಎಲೀಯಾಮನ ಮಗಳೂ, ಹಿತ್ತಿಯನಾದ ಊರೀಯನ ಹೆಂಡತಿಯೂ ಬತ್ಷೆಬೆಳು,” ಎಂದನು.</verse>
				<verse number="4">ಆಗ ದಾವೀದನು ದೂತರನ್ನು ಕಳುಹಿಸಿ ಅವಳನ್ನು ಬರಮಾಡಿಕೊಂಡನು. ಅವಳು ಅವನ ಬಳಿಗೆ ಬಂದಾಗ, ಅವಳು ತನ್ನ ಮೈಲಿಗೆಯನ್ನು ಕಳೆದುಕೊಂಡು ಶುಚಿಯಾಗಿದ್ದದರಿಂದ, ದಾವೀದನು ಅವಳ ಸಂಗಡ ಮಲಗಿದನು.</verse>
				<verse number="5">ತರುವಾಯ ಆಕೆಯು ತನ್ನ ಮನೆಗೆ ಹೋದಳು. ಆ ಸ್ತ್ರೀಯು ಗರ್ಭಧರಿಸಿ, “ತಾನು ಗರ್ಭವತಿ,” ಎಂಬ ವಿಷಯವನ್ನು ದಾವೀದನಿಗೆ ಹೇಳಿ ಕಳುಹಿಸಿದಳು.</verse>
				<verse number="6">ಆಗ ದಾವೀದನು, “ಹಿತ್ತಿಯನಾದ ಊರೀಯನನ್ನು ತನ್ನ ಬಳಿಗೆ ಕಳುಹಿಸು,” ಎಂದು ಯೋವಾಬನಿಗೆ ಹೇಳಿ ಕಳುಹಿಸಿದನು. ಹಾಗೆಯೇ ಯೋವಾಬನು ಊರೀಯನನ್ನು ದಾವೀದನ ಬಳಿಗೆ ಕಳುಹಿಸಿದನು.</verse>
				<verse number="7">ಊರೀಯನು ದಾವೀದನ ಬಳಿಗೆ ಬಂದಾಗ, ದಾವೀದನು ಅವನನ್ನು, “ಯೋವಾಬನೂ ಸೈನ್ಯದವರೂ ಹೇಗಿದ್ದಾರೆ? ಮತ್ತು ಯುದ್ಧವು ಹೇಗಿದೆ?” ಎಂದು ವಿಚಾರಿಸಿದನು.</verse>
				<verse number="8">ದಾವೀದನು ಊರೀಯನಿಗೆ, “ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ,” ಎಂದನು. ಊರೀಯನು ಅರಸನ ಮನೆಯಿಂದ ಹೊರಟುಹೋದನು. ನಂತರ ಅರಸನು ಅವನಿಗೆ ಉಪಹಾರ ಕಳುಹಿಸಿದನು.</verse>
				<verse number="9">ಆದರೆ ಊರೀಯನು ತನ್ನ ಮನೆಗೆ ಹೋಗದೆ, ಅರಮನೆಯ ಬಾಗಿಲ ಬಳಿಯಲ್ಲಿ ತನ್ನ ಅರಸನ ಸಮಸ್ತ ಸೇವಕರ ಸಂಗಡ ಮಲಗಿದ್ದನು.</verse>
				<verse number="10">ಊರೀಯನು ತನ್ನ ಮನೆಗೆ ಹೋಗಲಿಲ್ಲವೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ದಾವೀದನು ಊರೀಯನಿಗೆ, “ನೀನು ಪ್ರಯಾಣದಿಂದ ಬರಲಿಲ್ಲವೋ? ಏಕೆ ನಿನ್ನ ಮನೆಗೆ ಹೋಗಲಿಲ್ಲ?” ಎಂದನು.</verse>
				<verse number="11">ಊರೀಯನು ದಾವೀದನಿಗೆ, “ಮಂಜೂಷವೂ, ಇಸ್ರಾಯೇಲಿನವರೂ, ಯೆಹೂದದವರೂ ಡೇರೆಗಳಲ್ಲಿ ವಾಸಿಸಿರುವಾಗಲೂ; ನನ್ನ ಒಡೆಯನಾದ ಯೋವಾಬನೂ, ನನ್ನ ಒಡೆಯನ ಸೇವಕರೂ ಬೈಲಿನಲ್ಲಿ ದಂಡಿಳಿದಿರುವಾಗ ನಾನು ಉಣ್ಣುವುದಕ್ಕೂ, ಕುಡಿಯುವುದಕ್ಕೂ, ನನ್ನ ಹೆಂಡತಿಯ ಸಂಗಡ ಮಲಗುವುದಕ್ಕೂ ನನ್ನ ಮನೆಗೆ ಹೋಗಲೋ? ನಿನ್ನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ಈ ಕಾರ್ಯ ಮಾಡುವುದಿಲ್ಲ,” ಎಂದನು.</verse>
				<verse number="12">ಆಗ ದಾವೀದನು ಊರೀಯನಿಗೆ, “ಈ ಹೊತ್ತು ಇಲ್ಲಿರು. ನಾಳೆ ನಿನ್ನನ್ನು ಕಳುಹಿಸುತ್ತೇನೆ,” ಎಂದನು. ಹಾಗೆಯೇ ಊರೀಯನೂ ಆ ದಿನವೂ, ಮಾರನೆಯ ದಿವಸವೂ ಯೆರೂಸಲೇಮಿನಲ್ಲಿ ಇದ್ದನು.</verse>
				<verse number="13">ದಾವೀದನು ಅವನನ್ನು ಕರೆದಾಗ, ಅವನು ಅವನ ಮುಂದೆ ಉಂಡು ಕುಡಿದನು. ಇದಲ್ಲದೆ ದಾವೀದನು ಅವನನ್ನು ಅಮಲೇರುವಂತೆ ಮಾಡಿಸಿದನು. ಅವನು ಸಾಯಂಕಾಲದಲ್ಲಿ ತನ್ನ ಮನೆಗೆ ಹೋಗದೆ, ತನ್ನ ಯಜಮಾನನ ಸೇವಕರ ಸಂಗಡ ಮಲಗುವುದಕ್ಕೆ ಹೊರಟುಹೋದನು.</verse>
				<verse number="14">ಉದಯದಲ್ಲಿ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು, ಊರೀಯನ ಕೈಯಲ್ಲಿ ಕಳುಹಿಸಿದನು.</verse>
				<verse number="15">ಆ ಪತ್ರದಲ್ಲಿ, “ಊರೀಯನನ್ನು ಘೋರ ಯುದ್ಧ ನಡೆಯುತ್ತಿರುವ ಕಡೆ ಮುಂದೆ ನಿಲ್ಲಿಸಿ, ಅವನು ಗಾಯಗೊಂಡು ಸಾಯುವಂತೆ, ಅವನನ್ನು ಬಿಟ್ಟು ನೀವು ಹಿಂದಕ್ಕೆ ಸರಿದುಕೊಳ್ಳಿರಿ,” ಎಂದು ಬರೆದಿದ್ದನು.</verse>
				<verse number="16">ಹಾಗೆಯೇ ಯೋವಾಬನು ಆ ಪಟ್ಟಣವನ್ನು ಮುತ್ತಿಗೆ ಹಾಕುವಾಗ, ಯಾವ ಸ್ಥಳದಲ್ಲಿ ಪರಾಕ್ರಮಶಾಲಿಗಳು ಇರುವರೆಂದು ತಿಳಿದುಕೊಂಡು, ಅಲ್ಲಿ ಊರೀಯನನ್ನು ನಿಲ್ಲಿಸಿದನು.</verse>
				<verse number="17">ಪಟ್ಟಣದ ಮನುಷ್ಯರು ಹೊರಟು ಯೋವಾಬನ ಸಂಗಡ ಯುದ್ಧಮಾಡುವಾಗ, ದಾವೀದನ ಸೇವಕರಾದವರಲ್ಲಿ ಕೆಲವರು ಸತ್ತರು. ಇದಲ್ಲದೆ ಹಿತ್ತಿಯನಾದ ಊರೀಯನೂ ಸತ್ತನು.</verse>
				<verse number="18">ಆಗ ಯೋವಾಬನು ಯುದ್ಧದ ವರ್ತಮಾನಗಳನ್ನೆಲ್ಲಾ ದಾವೀದನಿಗೆ ತಿಳಿಸುವುದಕ್ಕೆ ದೂತನನ್ನು ಕಳುಹಿಸುವಾಗ ಅವನಿಗೆ ಹೇಳಿದ್ದೇನೆಂದರೆ:</verse>
				<verse number="19">“ನೀನು ಈ ಯುದ್ಧದ ವರ್ತಮಾನಗಳನ್ನೆಲ್ಲಾ ಅರಸನಿಗೆ ಹೇಳಿ ತೀರಿಸಿದ ತರುವಾಯ,</verse>
				<verse number="20">ಅರಸನಿಗೆ ಕೋಪ ಉರಿದು, ‘ನೀವು ಯುದ್ಧಮಾಡುವುದಕ್ಕೆ ಪಟ್ಟಣಕ್ಕೆ ಇಷ್ಟು ಸಮೀಪವಾಗಿ ಸೇರಿದ್ದೇನು?</verse>
				<verse number="21">ಅವರು ಗೋಡೆಯಿಂದ ಬಾಣಗಳನ್ನು ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ? ಯೆರುಬ್ಬೆಷೆತನ ಮಗ ಅಬೀಮೆಲೆಕನನ್ನು ಕೊಂದವರ‍್ಯಾರು? ತೆಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲಿನ ತುಂಡನ್ನು ಅವನ ಮೇಲೆ ಹಾಕಿದಾಗ, ಅವನು ಸತ್ತನಲ್ಲವೋ? ನೀವು ಗೋಡೆಗೆ ಅಷ್ಟು ಸಮೀಪ ಏಕೆ ಹೋದಿರಿ?’ ಎಂದು ಕೇಳಿದರೆ; ಆಗ ನೀನು ಅವನಿಗೆ, ನಿಮ್ಮ ಸೇವಕನಾದ ಊರೀಯನೆಂಬ ಹಿತ್ತಿಯನು ಸತ್ತನೆಂದು ಹೇಳು,” ಎಂದನು.</verse>
				<verse number="22">ಹಾಗೆಯೇ ಆ ದೂತನು ಹೋಗಿ ದಾವೀದನಿಗೆ ಯೋವಾಬನು ತನ್ನೊಂದಿಗೆ ಕಳುಹಿಸಿದ ವರ್ತಮಾನಗಳನ್ನೆಲ್ಲಾ ತಿಳಿಸಿದನು.</verse>
				<verse number="23">ಆ ದೂತನು ದಾವೀದನಿಗೆ, “ಆ ಮನುಷ್ಯರು ನಿಶ್ಚಯವಾಗಿ ನಮ್ಮ ಮೇಲೆ ಬಲಗೊಂಡು ಬಯಲಿನಲ್ಲಿ ನಮ್ಮ ಮೇಲೆ ಹೊರಟುಬಂದಾಗ, ನಾವು ಪಟ್ಟಣದ ಬಾಗಿಲವರೆಗೆ ಅವರ ಮೇಲೆ ಬಂದೆವು.</verse>
				<verse number="24">ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದ ಕಾರಣ, ಅರಸನ ಸೇವಕರಲ್ಲಿ ಕೆಲವರು ಸತ್ತರು. ಇದಲ್ಲದೆ ನಿನ್ನ ಸೇವಕನಾದ ಊರೀಯನೆಂಬ ಹಿತ್ತಿಯನು ಸತ್ತನು,” ಎಂದನು.</verse>
				<verse number="25">ಆಗ ದಾವೀದನು ಆ ದೂತನಿಗೆ, “ನೀನು ಯೋವಾಬನಿಗೆ, ‘ಇದು ನಿನ್ನನ್ನು ಕದಲಿಸದಿರಲಿ. ಖಡ್ಗವು ಇವನನ್ನಾದರೂ ಸರಿ, ಅವನನ್ನಾದರೂ ಸರಿ ತಿಂದುಬಿಡುವುದು. ನೀನು ಪಟ್ಟಣವನ್ನು ನಿರ್ಮೂಲ ಮಾಡುವ ಹಾಗೆ, ಅದರ ಮೇಲೆ ನಿನ್ನ ಯುದ್ಧವು ಹೆಚ್ಚು ಬಲವಾಗಿರಲಿ,’ ಎಂದು ಹೇಳಿ, ಅವನನ್ನು ಬಲಪಡಿಸು,” ಎಂದನು.</verse>
				<verse number="26">ತನ್ನ ಗಂಡನಾದ ಊರೀಯನು ಸತ್ತನೆಂದು ಊರೀಯನ ಹೆಂಡತಿಯು ಕೇಳಿದಾಗ, ಅವಳು ತನ್ನ ಗಂಡನಿಗೋಸ್ಕರ ಗೋಳಾಡಿದಳು.</verse>
				<verse number="27">ದುಃಖದ ದಿವಸಗಳು ತೀರಿದ ತರುವಾಯ, ದಾವೀದನು ಅವಳನ್ನು ತನ್ನ ಮನೆಗೆ ಕರೆಯಕಳುಹಿಸಿದನು. ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕಾರ್ಯವು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದಾಗಿತ್ತು.</verse>
			</chapter>
			<chapter number="12">
				<verse number="1">ಯೆಹೋವ ದೇವರು ದಾವೀದನ ಬಳಿಗೆ ನಾತಾನನನ್ನು ಕಳುಹಿಸಿದರು. ಅವನು ದಾವೀದನ ಬಳಿಗೆ ಬಂದು ಅವನಿಗೆ, “ಒಂದು ಊರಿನಲ್ಲಿ ಇಬ್ಬರು ಮನುಷ್ಯರಿದ್ದರು. ಒಬ್ಬನು ಐಶ್ವರ್ಯವಂತನು, ಮತ್ತೊಬ್ಬನು ಬಡವನು.</verse>
				<verse number="2">ಐಶ್ವರ್ಯವಂತನಿಗೆ ಕುರಿದನಗಳು ಬಹಳವಾಗಿದ್ದವು.</verse>
				<verse number="3">ಬಡವನಿಗೆ ತಾನು ಕೊಂಡುಕೊಂಡ ಒಂದು ಚಿಕ್ಕ ಹೆಣ್ಣು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅದು ಅವನ ಸಂಗಡ, ಅವನ ಮಕ್ಕಳ ಸಂಗಡ ಬೆಳೆದು, ಅವನ ಸ್ವಂತ ಆಹಾರ ತಿಂದು, ಅವನ ಪಾತ್ರೆಯಲ್ಲಿ ಕುಡಿದು, ಅವನ ಮಗ್ಗುಲಲ್ಲಿ ಮಲಗಿಕೊಂಡು, ಅವನಿಗೆ ಮಗಳ ಹಾಗಿತ್ತು.</verse>
				<verse number="4">“ಐಶ್ವರ್ಯವಂತನ ಬಳಿಗೆ ಒಬ್ಬ ಪ್ರಯಾಣಿಕನು ಬಂದಾಗ, ಐಶ್ವರ್ಯವಂತನು ಅತಿಥಿಗಾಗಿ ಅಡಿಗೆಯನ್ನು ಮಾಡಿಸುವುದಕ್ಕೆ ತನ್ನ ಕುರಿದನಗಳಲ್ಲಿ ಒಂದನ್ನೂ ತೆಗೆದುಕೊಳ್ಳಲು ಮನಸ್ಸಿಲ್ಲದೆ, ಆ ಬಡವನ ಕುರಿಯನ್ನು ತೆಗೆದುಕೊಂಡು, ತನ್ನ ಬಳಿಗೆ ಬಂದ ಮನುಷ್ಯನಿಗೋಸ್ಕರ ಅದನ್ನು ಅಡಿಗೆ ಮಾಡಿಸಿದನು,” ಎಂದನು.</verse>
				<verse number="5">ಆಗ ದಾವೀದನು ಆ ಮನುಷ್ಯನ ಮೇಲೆ ಬಹಳ ಕೋಪಿಸಿಕೊಂಡು ನಾತಾನನಿಗೆ, “ಯೆಹೋವ ದೇವರ ಜೀವದಾಣೆ, ಇದನ್ನು ಮಾಡಿದ ಆ ಮನುಷ್ಯನು ನಿಜವಾಗಿಯೂ ಸಾಯಬೇಕು.</verse>
				<verse number="6">ಅವನು ಕನಿಕರಪಡದೆ ಈ ಕಾರ್ಯವನ್ನು ಮಾಡಿದ್ದರಿಂದ, ಆ ಕುರಿಗೋಸ್ಕರವಾಗಿ ನಾಲ್ಕರಷ್ಟು ತಿರುಗಿ ಕೊಡಬೇಕು,” ಎಂದನು.</verse>
				<verse number="7">ಆಗ ನಾತಾನನು ದಾವೀದನಿಗೆ, “ನೀನೇ ಆ ಮನುಷ್ಯನು! ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ, ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು;</verse>
				<verse number="8">ನಿನ್ನ ಯಜಮಾನನ ಮನೆಯನ್ನೂ, ನಿನ್ನ ಯಜಮಾನನ ಹೆಂಡತಿಯರನ್ನೂ ನಿನಗೆ ಕೊಟ್ಟು; ಇಸ್ರಾಯೇಲಿನ ಮನೆಯನ್ನೂ, ಯೆಹೂದದ ಮನೆಯನ್ನೂ ನಿನಗೆ ಕೊಟ್ಟೆನು. ಇದು ಸಾಲದೆ ಇದ್ದರೆ, ಇಂಥಿಂಥವುಗಳನ್ನು ನಿನಗೆ ಇನ್ನೂ ಕೊಡುತ್ತಿದ್ದೆನು.</verse>
				<verse number="9">ನೀನು ಯೆಹೋವ ದೇವರ ದೃಷ್ಟಿಗೆ ಈ ಕೆಟ್ಟ ಕಾರ್ಯವನ್ನು ಮಾಡುವಂತೆ ಅವರ ವಾಕ್ಯವನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಖಡ್ಗದಿಂದ ಹೊಡೆದು ಹಾಕಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯಾಗಿ ತೆಗೆದುಕೊಂಡೆ. ಇದಲ್ಲದೆ ಅವನನ್ನು ಅಮ್ಮೋನಿಯರ ಖಡ್ಗದಿಂದ ಕೊಂದು ಹಾಕಿಸಿದೆ.</verse>
				<verse number="10">ಈಗ ನೀನು ನನ್ನನ್ನು ತಿರಸ್ಕರಿಸಿ, ಹಿತ್ತಿಯನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡದ್ದರಿಂದ, ಖಡ್ಗವು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ತೊಲಗದು.</verse>
				<verse number="11">“ಯೆಹೋವ ದೇವರು ಹೇಳುವುದೇನೆಂದರೆ: ‘ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ, ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು, ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲು ಹೊತ್ತಿನಲ್ಲಿಯೇ ಅವರ ಸಂಗಡ ಮಲಗುವನು.</verse>
				<verse number="12">ಏಕೆಂದರೆ ನೀನು ಮರೆಯಲ್ಲಿ ಅದನ್ನು ಮಾಡಿದೆ. ಆದರೆ ನಾನು ಈ ಕಾರ್ಯವನ್ನು ಇಸ್ರಾಯೇಲರೆಲ್ಲರ ಮುಂದೆಯೂ, ಹಗಲು ಹೊತ್ತಿನಲ್ಲಿಯೂ ಮಾಡುವೆನು,’ ” ಎಂದನು.</verse>
				<verse number="13">ಆಗ ದಾವೀದನು ನಾತಾನನಿಗೆ, “ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದನು. ನಾತಾನನು ದಾವೀದನಿಗೆ, “ನೀನು ಸಾಯದ ಹಾಗೆ ಯೆಹೋವ ದೇವರು ನಿನ್ನ ಪಾಪವನ್ನು ಪರಿಹರಿಸಿದರು.</verse>
				<verse number="14">ಹೇಗಿದ್ದರೂ ಈ ಕಾರ್ಯದಿಂದ ನೀನು ಯೆಹೋವ ದೇವರ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ, ನಿನಗೆ ಹುಟ್ಟಿದ ಮಗುವು ಖಂಡಿತವಾಗಿ ಸಾಯುವುದು,” ಎಂದನು.</verse>
				<verse number="15">ನಂತರ ನಾತಾನನು ತನ್ನ ಮನೆಗೆ ಹೋದನು. ಯೆಹೋವ ದೇವರು, ಊರೀಯನ ಹೆಂಡತಿಯು ದಾವೀದನಿಗೆ ಹೆತ್ತ ಕೂಸನ್ನು ಬಾಧಿಸಲು, ಅದು ಬಹಳ ಅಸ್ವಸ್ಥವಾಯಿತು.</verse>
				<verse number="16">ದಾವೀದನು ಕೂಸಿಗೋಸ್ಕರ ದೇವರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪವಾಸ ಮಾಡಿ, ಒಳಗಿನ ಕೋಣೆಯಲ್ಲಿ ನೆಲದ ಮೇಲೆಯೇ ರಾತ್ರಿ ಕಳೆಯುತ್ತಿದ್ದನು.</verse>
				<verse number="17">ಅವನನ್ನು ಎಬ್ಬಿಸುವುದಕ್ಕೆ ಅವನ ಮನೆಯ ಹಿರಿಯರು ಅವನ ಬಳಿಗೆ ಬಂದರು. ಆದರೆ ಅವನಿಗೆ ಮನಸ್ಸಿಲ್ಲದೆ ಇತ್ತು. ಅವರ ಸಂಗಡ ಭೋಜನ ಮಾಡದೆ ಇದ್ದನು.</verse>
				<verse number="18">ಮಗುವು ಏಳನೆಯ ದಿವಸ ಸತ್ತು ಹೋಯಿತು. ಆಗ ಮಗುವು ಸತ್ತು ಹೋಯಿತೆಂದು ದಾವೀದನ ಸೇವಕರು ಅವನಿಗೆ ತಿಳಿಸುವುದಕ್ಕೆ ಭಯಪಟ್ಟರು. ಏಕೆಂದರೆ, “ಮಗುವು ಇನ್ನೂ ಬದುಕಿರುವಾಗ, ನಾವು ಅವನ ಸಂಗಡ ಮಾತನಾಡಿದಾಗ, ಅವನು ನಮ್ಮ ಮಾತನ್ನು ಕೇಳದೆ ಹೋದನು. ಈಗ ಮಗುವು ಸತ್ತು ಹೋಯಿತೆಂದು ನಾವು ಅವನಿಗೆ ಹೇಳಿದರೆ, ಅವನು ತನಗೆ ಏನಾದರೂ ಕೇಡುಮಾಡಿಕೊಳ್ಳುವನೋ?” ಎಂದುಕೊಂಡರು.</verse>
				<verse number="19">ಆದರೆ ದಾವೀದನು ತನ್ನ ಸೇವಕರು ಪಿಸುಗುಟ್ಟುವುದನ್ನು ಕಂಡು, ಮಗು ಸತ್ತು ಹೋಯಿತೆಂದು ಗ್ರಹಿಸಿಕೊಂಡನು. ದಾವೀದನು ತನ್ನ ಸೇವಕರಿಗೆ, “ಮಗುವು ಸತ್ತು ಹೋಯಿತೋ?” ಎಂದನು. ಅವರು, “ಸತ್ತು ಹೋಯಿತು,” ಎಂದರು.</verse>
				<verse number="20">ಆಗ ದಾವೀದನು ನೆಲದಿಂದ ಎದ್ದು ಸ್ನಾನಮಾಡಿ, ತೈಲವನ್ನು ಹಚ್ಚಿಕೊಂಡವನಾಗಿ, ಬದಲು ವಸ್ತ್ರಗಳನ್ನು ಧರಿಸಿಕೊಂಡು, ಯೆಹೋವ ದೇವರ ಮನೆಗೆ ಹೋಗಿ, ಅವರನ್ನು ಆರಾಧಿಸಿ ತನ್ನ ಮನೆಗೆ ಬಂದನು. ಅವನ ಕೋರಿಕೆಯ ಮೇರೆಗೆ ಅವರು ಅವನಿಗೆ ಆಹಾರವನ್ನು ಬಡಿಸಿದರು ಮತ್ತು ಅವನು ತಿನ್ನುತ್ತಿದ್ದನು.</verse>
				<verse number="21">ಅವನ ಸೇವಕರು ಅವನಿಗೆ, “ಇದು ಏನು ನೀನು ಮಾಡಿದ್ದು? ಮಗುವು ಜೀವದಿಂದ ಇರುವಾಗ, ನೀನು ಉಪವಾಸವಾಗಿದ್ದು ಅದಕ್ಕೋಸ್ಕರ ಅಳುತ್ತಿದ್ದೆ. ಆದರೆ ಮಗುವು ಸತ್ತಮೇಲೆ ನೀನು ಎದ್ದು ರೊಟ್ಟಿಯನ್ನು ತಿಂದೆ,” ಎಂದರು.</verse>
				<verse number="22">ಅದಕ್ಕವನು, “ಮಗುವು ಜೀವದಿಂದ ಇರುವಾಗ ಅದು ಬದುಕುವ ಹಾಗೆ ಯೆಹೋವ ದೇವರು ನನಗೆ ದಯಮಾಡುವರೋ ಎಂದು ಉಪವಾಸ ಮಾಡಿ ಅತ್ತೆನು.</verse>
				<verse number="23">ಆದರೆ ಈಗ ಸತ್ತಿದೆಯಲ್ಲಾ. ನಾನು ಉಪವಾಸ ಮಾಡುವುದು ಏಕೆ? ನಾನು ಅದನ್ನು ತಿರುಗಿ ಬರಮಾಡಬಲ್ಲೆನೋ? ನಾನು ಅದರ ಬಳಿಗೆ ಹೋಗುವೆನು. ಆದರೆ ಅದು ನನ್ನ ಬಳಿಗೆ ತಿರುಗಿ ಬರುವುದಿಲ್ಲ,” ಎಂದನು.</verse>
				<verse number="24">ದಾವೀದನು ತನ್ನ ಹೆಂಡತಿಯಾದ ಬತ್ಷೆಬೆಳನ್ನು ಆಧರಿಸಿ, ಅವಳ ಬಳಿಗೆ ಹೋಗಿ ಅವಳ ಸಂಗಡ ಮಲಗಿದನು. ಅವಳು ಒಬ್ಬ ಮಗನನ್ನು ಹೆತ್ತಳು. ಅವನಿಗೆ ಸೊಲೊಮೋನನೆಂದು ಹೆಸರಿಟ್ಟನು. ಯೆಹೋವ ದೇವರು ಅವನನ್ನು ಪ್ರೀತಿ ಮಾಡಿದರು.</verse>
				<verse number="25">ಪ್ರವಾದಿಯಾದ ನಾತಾನನ ಮುಖಾಂತರ ಯೆಹೋವ ದೇವರ ನಿಮಿತ್ತ ಅವನಿಗೆ ಯೆದೀದ್ಯ ಎಂದು ಹೆಸರಿಟ್ಟನು.</verse>
				<verse number="26">ಯೋವಾಬನು ಅಮ್ಮೋನಿಯರ ರಬ್ಬತಿನ ಮೇಲೆ ಯುದ್ಧಮಾಡಿ, ಅರಮನೆ ಇದ್ದ ಪಟ್ಟಣವನ್ನು ವಶಪಡಿಸಿಕೊಂಡನು.</verse>
				<verse number="27">ಯೋವಾಬನು ದಾವೀದನಿಗೆ, “ನಾನು ರಬ್ಬಕ್ಕೆ ವಿರೋಧವಾಗಿ ಯುದ್ಧಮಾಡಿ, ನೀರು ಪೂರೈಕೆಯ ಭಾಗವನ್ನು ಸ್ವಾಧೀನ ಮಾಡಿಕೊಂಡಿದ್ದೇನೆ.</verse>
				<verse number="28">ಈಗ ನಾನು ಪಟ್ಟಣವನ್ನು ಹಿಡಿದು, ಅದು ನನ್ನ ಹೆಸರಿಗೆ ಕೀರ್ತಿ ಬಾರದ ಹಾಗೆ ನೀನು ಜನರನ್ನು ಕೂಡಿಸಿಕೊಂಡು ಬಂದು, ಪಟ್ಟಣವನ್ನು ಮುತ್ತಿಗೆ ಹಾಕಿ ಹಿಡಿ,” ಎಂದು ಹೇಳಿ ದೂತರನ್ನು ಕಳುಹಿಸಿದನು.</verse>
				<verse number="29">ಹಾಗೆಯೇ ದಾವೀದನು ಜನರೆಲ್ಲರನ್ನು ಕೂಡಿಸಿಕೊಂಡು ರಬ್ಬಕ್ಕೆ ಹೋಗಿ, ಅದರ ಮೇಲೆ ಯುದ್ಧಮಾಡಿ ಅದನ್ನು ವಶಮಾಡಿಕೊಂಡನು.</verse>
				<verse number="30">ಇದಲ್ಲದೆ ದಾವೀದನು ಅಮ್ಮೋನಿಯರ ಅರಸನ ತಲೆಯ ಮೇಲೆ ಇದ್ದ ಕಿರೀಟವನ್ನು ಸಹ ತೆಗೆದುಕೊಂಡನು. ಅದು ಮೂವತ್ತೈದು ಕಿಲೋಗ್ರಾಂ ತೂಕದ್ದಾಗಿತ್ತು ಅದನ್ನು ಬಂಗಾರದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ ಅಲಂಕರಿಸಲಾಗಿತ್ತು, ಆ ಕಿರೀಟವನ್ನು ದಾವೀದನ ಶಿರಸ್ಸಿನಲ್ಲಿ ಧರಿಸಲಾಯಿತು. ಆ ಪಟ್ಟಣದೊಳಗಿಂದ ಅತ್ಯಧಿಕವಾದ ಕೊಳ್ಳೆಯನ್ನೂ ತೆಗೆದುಕೊಂಡು ಬಂದನು.</verse>
				<verse number="31">ಇದಲ್ಲದೆ ಅವನು ಅದರಲ್ಲಿದ್ದ ಜನರನ್ನು ಹೊರಗೆ ತಂದು, ಅವರನ್ನು ಗರಗಸ ಗುದ್ದಲಿ ಕೊಡಲಿಗಳಿಂದ ಕೆಲಸ ಮಾಡುವದಕ್ಕೂ ಇಟ್ಟಿಗೆಗಳನ್ನು ಸುಡುವುದಕ್ಕೂ ಇಟ್ಟನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟಣಗಳಿಗೂ ಮಾಡಿದನು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ತಿರುಗಿಬಂದನು.</verse>
			</chapter>
			<chapter number="13">
				<verse number="1">ಕಾಲಾಂತರದಲ್ಲಿ ದಾವೀದನ ಮಗ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸುಂದರಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗ ಅಮ್ನೋನನು ಪ್ರೀತಿಮಾಡಿದನು.</verse>
				<verse number="2">ತನ್ನ ಸಹೋದರಿಯಾದ ತಾಮಾರಳ ನಿಮಿತ್ತ ಬಹು ಸಂಕಟಪಟ್ಟು ಅಸ್ವಸ್ಥನಾದನು. ಅವಳು ಕನ್ಯೆಯಾಗಿದ್ದಳು. ಆದ್ದರಿಂದ ಅವಳನ್ನು ಏನಾದರೂ ಮಾಡುವುದಕ್ಕೆ ಅಮ್ನೋನನಿಗೆ ಕಷ್ಟವಾಗಿತ್ತು.</verse>
				<verse number="3">ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮೆಯನ ಮಗ ಯೊನಾದಾಬನೆಂಬ ಹೆಸರುಳ್ಳ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಬಹು ಕುಯುಕ್ತಿಯುಳ್ಳವನಾಗಿದ್ದನು.</verse>
				<verse number="4">ಯೋನಾದಾಬನು ಅಮ್ನೋನನಿಗೆ, “ಅರಸನ ಮಗನಾದ ನೀನು ದಿನದಿನಕ್ಕೆ ಏಕೆ ಕ್ಷೀಣವಾಗಿ ಹೋಗುತ್ತೀ? ನನಗೆ ತಿಳಿಸುವುದಿಲ್ಲವೋ?” ಎಂದನು. ಅದಕ್ಕೆ ಅಮ್ನೋನನು ಅವನಿಗೆ, “ನಾನು ನನ್ನ ಸಹೋದರನಾಗಿರುವ ಅಬ್ಷಾಲೋಮನ ಸಹೋದರಿ ತಾಮಾರಳನ್ನು ಪ್ರೀತಿಮಾಡುತ್ತಿದ್ದೇನೆ,” ಎಂದನು.</verse>
				<verse number="5">ಆಗ ಯೋನಾದಾಬನು ಅವನಿಗೆ, “ನೀನು ರೋಗಿಷ್ಟನ ಹಾಗೆ ಮಂಚದ ಮೇಲೆ ಮಲಗು; ನಿನ್ನನ್ನು ನೋಡುವುದಕ್ಕೆ ನಿನ್ನ ತಂದೆ ಬರುವಾಗ ನೀನು ಅವನಿಗೆ, ‘ನನ್ನ ಸಹೋದರಿ ತಾಮಾರಳು ಬರುವ ಹಾಗೆ ದಯಮಾಡಬೇಕು. ನಾನು ಅವಳ ಕೈಯಿಂದ ಉಣ್ಣುವ ಹಾಗೆ, ಅವಳು ನನ್ನ ಕಣ್ಣೆದುರಿನಲ್ಲಿ ಅಡಿಗೆಯನ್ನು ಮಾಡಿ, ನನಗೆ ಆಹಾರ ಕೊಡಲಿ,’ ಎಂದು ಹೇಳು,” ಎಂದನು.</verse>
				<verse number="6">ಅಮ್ನೋನನು ಅದೇ ಪ್ರಕಾರ ರೋಗಿಷ್ಟನ ಹಾಗೆ ಮಲಗಿಕೊಂಡನು. ಅರಸನು ತನ್ನನ್ನು ನೋಡುವುದಕ್ಕೆ ಬಂದಾಗ ಅಮ್ನೋನನು ಅರಸನಿಗೆ, “ನೀವು ನನ್ನ ಸಹೋದರಿ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣು ಮುಂದೆ ಎರಡು ಭಕ್ಷ್ಯಗಳನ್ನು ಮಾಡುವುದಕ್ಕೆ ಬರಲಿ,” ಎಂದನು.</verse>
				<verse number="7">ಆಗ ದಾವೀದನು ತನ್ನ ಮನೆಯಲ್ಲಿರುವ ತಾಮಾರಳ ಬಳಿಗೆ ಮನುಷ್ಯನನ್ನು ಕಳುಹಿಸಿ, “ನೀನು ನಿನ್ನ ಸಹೋದರ ಅಮ್ನೋನನ ಮನೆಗೆ ಹೋಗಿ, ಅವನಿಗೆ ಅಡಿಗೆಯನ್ನು ಮಾಡಿ ಇಡು,” ಎಂದನು.</verse>
				<verse number="8">ಹಾಗೆಯೇ ತಾಮಾರಳು ತನ್ನ ಸಹೋದರ ಅಮ್ನೋನನ ಮನೆಗೆ ಹೋದಳು. ಆಗ ಅವನು ಮಲಗಿದ್ದನು. ಅವಳು ಹಿಟ್ಟನ್ನು ತೆಗೆದು ಕಲಸಿ, ಅವನ ಕಣ್ಣು ಮುಂದೆ ನಾದಿ, ಭಕ್ಷ್ಯಗಳನ್ನು ಮಾಡಿ,</verse>
				<verse number="9">ಪಾತ್ರೆ ತೆಗೆದುಕೊಂಡು ಅವನ ಮುಂದೆ ಇಟ್ಟಳು. ಆದರೆ ಅಮ್ನೋನನು, “ನಾನು ಉಣ್ಣುವುದಿಲ್ಲ,” ಎಂದು ಹೇಳಿ, “ನನ್ನ ಬಳಿಯಿಂದ ಎಲ್ಲಾ ಮನುಷ್ಯರನ್ನು ಕಳುಹಿಸಿಬಿಡಿರಿ,” ಎಂದನು. ಹಾಗೆಯೇ ಎಲ್ಲರು ಅವನನ್ನು ಬಿಟ್ಟುಹೋದರು.</verse>
				<verse number="10">ಆಗ ಅಮ್ನೋನನು, “ನಾನು ನಿನ್ನ ಕೈಯಿಂದ ತಿನ್ನುವಂತೆ ಆ ಭಕ್ಷ್ಯಗಳನ್ನು ಕೊಠಡಿಯೊಳಗೆ ತೆಗೆದುಕೊಂಡು ಬಾ,” ಎಂದನು. ಹಾಗೆಯೇ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಕೊಠಡಿಯೊಳಗೆ ತನ್ನ ಸಹೋದರನಾದ ಅಮ್ಮೋನನ ಬಳಿಗೆ ತೆಗೆದುಕೊಂಡು ಬಂದಳು.</verse>
				<verse number="11">ಅವನು ಅವುಗಳನ್ನು ಉಣ್ಣುವ ಹಾಗೆ ಅವಳು ಅವನ ಬಳಿಗೆ ತಂದಾಗ, ಅವನು ಅವಳನ್ನು ಹಿಡಿದು ಅವಳಿಗೆ, “ನನ್ನ ಸಹೋದರಿಯೇ, ನನ್ನ ಸಂಗಡ ಮಲಗು ಬಾ,” ಎಂದನು.</verse>
				<verse number="12">ಅದಕ್ಕವಳು, “ನನ್ನ ಸಹೋದರನೇ, ಬೇಡ. ನನ್ನನ್ನು ಒತ್ತಾಯ ಮಾಡಬೇಡ. ಏಕೆಂದರೆ ಇಸ್ರಾಯೇಲಿನಲ್ಲಿ ಇಂಥ ಕಾರ್ಯ ಮಾಡಕೂಡದು. ಇಂಥ ದುಷ್ಟತನದ ಕೆಲಸ ಮಾಡಬೇಡ.</verse>
				<verse number="13">ಈ ಅವಮಾನವನ್ನು ಮರೆಮಾಡುವುದು ಹೇಗೆ? ನೀನು ಇಸ್ರಾಯೇಲಿನಲ್ಲಿ ದುಷ್ಟ ಮೂರ್ಖರೊಳಗೆ ಒಬ್ಬನಾಗಿ ಇರುವೆ. ಹಾಗಾದರೆ ಈಗ ದಯಮಾಡಿ ಅರಸನ ಸಂಗಡ ಮಾತನಾಡು. ಏಕೆಂದರೆ ಅವನು ನಿನ್ನ ಬಳಿಯಿಂದ ನನ್ನನ್ನು ಹೇಗಾದರೂ ಹಿಂತೆಗೆಯುವುದಿಲ್ಲ,” ಎಂದಳು.</verse>
				<verse number="14">ಆದರೆ ಅವನು ಅವಳ ಮಾತನ್ನು ಕೇಳಲಿಲ್ಲ. ಅಮ್ನೋನನು ಆಕೆಗಿಂತಲೂ ಬಲಶಾಲಿಯಾಗಿದ್ದರಿಂದ ಅವನು ಬಲಾತ್ಕಾರದಿಂದ ಅವಳ ಮೇಲೆ ಅತ್ಯಾಚಾರಮಾಡಿದನು.</verse>
				<verse number="15">ಅನಂತರ ಅಮ್ನೋನನು ಅವಳನ್ನು ಅತ್ಯಂತ ಹಗೆ ಮಾಡಿದನು. ಅವಳನ್ನು ಹಗೆ ಮಾಡುವ ಮೊದಲು ಮಾಡಿದ ಪ್ರೀತಿಗಿಂತ ಅದು ಅಧಿಕವಾಗಿತ್ತು. ಆದ್ದರಿಂದ, ಅಮ್ನೋನನು ಅವಳಿಗೆ, “ಎದ್ದು ಹೋಗು,” ಎಂದನು.</verse>
				<verse number="16">ಆಗ ಅವಳು ಅವನಿಗೆ, “ಬೇಡ! ನನಗೆ ಮಾಡಿದ ಆ ಕೆಟ್ಟತನಕ್ಕಿಂತ, ನೀನು ನನ್ನನ್ನು ಕಳುಹಿಸಿಬಿಡುವ ಈ ಕೆಟ್ಟತನವು ಅಧಿಕ ಅನ್ಯಾಯವಾಗಿದೆ,” ಎಂದಳು. ಆದರೆ ಅವನು ಅವಳ ಮಾತನ್ನು ಕೇಳಲೊಲ್ಲದೆ</verse>
				<verse number="17">ಯಾವಾಗಲೂ ತನ್ನೊಂದಿಗೆ ಇರುತ್ತಿದ್ದ ಸೇವಕನನ್ನು ಕರೆದು, “ಇವಳನ್ನು ನನ್ನ ಬಳಿಯಿಂದ ಹೊರಗೆ ತಳ್ಳಿ, ಅವಳ ಹಿಂದೆ ಬಾಗಿಲು ಮುಚ್ಚಿ ಭದ್ರಪಡಿಸು,” ಎಂದನು.</verse>
				<verse number="18">ಅವಳು ವಿವಿಧ ಬಣ್ಣದ ವಸ್ತ್ರಗಳನ್ನು ಧರಿಸಿದ್ದಳು. ಏಕೆಂದರೆ ಅರಸನ ಪುತ್ರಿಯರಾದ ಕನ್ಯೆಯರು ಇಂಥಾ ನಿಲುವಂಗಿಗಳನ್ನು ಧರಿಸಿಕೊಳ್ಳುತ್ತಿದ್ದರು. ಅವನ ಸೇವಕನು ಅವಳನ್ನು ಹೊರಗೆ ತಂದು, ಅವಳ ಹಿಂದೆ ಬಾಗಿಲು ಮುಚ್ಚಿ ಬೀಗ ಹಾಕಿದನು.</verse>
				<verse number="19">ಆಗ ತಾಮಾರಳು ತನ್ನ ತಲೆಯ ಮೇಲೆ ಬೂದಿಯನ್ನು ಹಾಕಿಕೊಂಡು, ತಾನು ಧರಿಸಿಕೊಂಡಿದ್ದ ವಿವಿಧ ಬಣ್ಣದ ವಸ್ತ್ರವನ್ನು ಹರಿದು, ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಗಟ್ಟಿಯಾಗಿ ಅಳುತ್ತಾ ಹೋದಳು.</verse>
				<verse number="20">ಆಗ ಅವಳ ಸಹೋದರ ಅಬ್ಷಾಲೋಮನು ಅವಳಿಗೆ, “ನಿನ್ನ ಸಹೋದರ ಅಮ್ನೋನನು ನಿನ್ನ ಮಾನಭಂಗ ಮಾಡಿದನೋ? ನನ್ನ ಸಹೋದರಿ, ಈಗ ಸುಮ್ಮನಿರು. ಅವನು ನಿನ್ನ ಸಹೋದರನು. ಈ ಕಾರ್ಯವನ್ನು ನಿನ್ನ ಮನಸ್ಸಿಗೆ ತೆಗೆದುಕೊಳ್ಳಬೇಡ,” ಎಂದನು. ಹಾಗೆಯೇ ತಾಮಾರಳು ತನ್ನ ಸಹೋದರ ಅಬ್ಷಾಲೋಮನ ಮನೆಯಲ್ಲಿ ಒಂಟಿಗಳಾಗಿ ವಾಸಿಸಿದಳು.</verse>
				<verse number="21">ಅರಸನಾದ ದಾವೀದನು ಇವುಗಳನ್ನೆಲ್ಲಾ ಕೇಳಿದಾಗ ಬಹು ಕೋಪಗೊಂಡನು.</verse>
				<verse number="22">ಆದರೆ ಅಬ್ಷಾಲೋಮನು ತನ್ನ ಸಹೋದರನಾದ ಅಮ್ನೋನನ ಸಂಗಡ ಒಳ್ಳೆಯದಾದರೂ, ಕೆಟ್ಟದ್ದಾದರೂ ಮಾತನಾಡದೆ ಇದ್ದನು. ಏಕೆಂದರೆ ಅವನು ತನ್ನ ಸಹೋದರಿಯಾದ ತಾಮಾರಳನ್ನು ಅವಮಾನ ಮಾಡಿದ್ದರಿಂದ, ಅಬ್ಷಾಲೋಮನು ಅವನನ್ನು ಹಗೆ ಮಾಡಿದನು.</verse>
				<verse number="23">ಎರಡು ವರ್ಷ ಪೂರ್ಣ ಮುಗಿದ ತರುವಾಯ, ಅಬ್ಷಾಲೋಮನಿಗೆ ಎಫ್ರಾಯೀಮಿನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವಾಗ, ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.</verse>
				<verse number="24">ಇದಲ್ಲದೆ ಅಬ್ಷಾಲೋಮನು ಅರಸನ ಬಳಿಗೆ ಹೋಗಿ, “ಇಗೋ, ಈಗ ನಿನ್ನ ಸೇವಕನ ಬಳಿಗೆ ಉಣ್ಣೆ ಕತ್ತರಿಸುವವರು ಇದ್ದಾರೆ; ಅರಸನೂ, ತನ್ನ ಸೇವಕರೂ ನಿನ್ನ ಸೇವಕನ ಬಳಿಗೆ ಬರಬಹುದೋ?” ಎಂದನು.</verse>
				<verse number="25">ಅದಕ್ಕೆ ಅರಸನು ಅಬ್ಷಾಲೋಮನಿಗೆ, “ನನ್ನ ಮಗನೇ, ನಾವು ನಿನಗೆ ಭಾರವಾಗಿರದ ಹಾಗೆ ನಾವೆಲ್ಲರು ಈಗ ಬರುವುದಿಲ್ಲ,” ಎಂದನು. ಅವನು ರಾಜನನ್ನು ಬಲವಂತ ಮಾಡಿದನು. ಆದರೆ ಅರಸನು ಹೋಗಲು ಒಪ್ಪದೆ, ಅಬ್ಷಾಲೋಮನನ್ನು ಆಶೀರ್ವದಿಸಿ ಕಳುಹಿಸಿದನು.</verse>
				<verse number="26">ಆಗ ಅಬ್ಷಾಲೋಮನು, “ಹಾಗಾದರೆ ನನ್ನ ಸಹೋದರನಾದ ಅಮ್ನೋನನು ನಮ್ಮ ಸಂಗಡ ಬರಲಿ,” ಎಂದನು. ಅರಸನು ಅವನಿಗೆ, “ಏಕೆ ಅವನು ನಿಮ್ಮ ಸಂಗಡ ಬರಬೇಕು?” ಎಂದನು.</verse>
				<verse number="27">ಆದರೆ ಅಬ್ಷಾಲೋಮನು ಅವನನ್ನು ಬಲವಂತ ಮಾಡಿದ್ದರಿಂದ, ಅವನು ಅಮ್ನೋನನನ್ನೂ, ಅರಸನ ಸಮಸ್ತ ಮಕ್ಕಳನ್ನೂ ಅವನ ಸಂಗಡ ಕಳುಹಿಸಿದನು.</verse>
				<verse number="28">ಅಬ್ಷಾಲೋಮನು ತನ್ನ ಸೇವಕರಿಗೆ, “ನೀವು ನೋಡಿಕೊಳ್ಳಿರಿ. ಅಮ್ನೋನನ ಮನಸ್ಸು ದ್ರಾಕ್ಷಾರಸದಿಂದ ಅಮಲೇರಿದಾಗ ನಾನು ನಿಮಗೆ ಅವನನ್ನು ಹೊಡೆಯಿರಿ ಎಂದು ಹೇಳಿದಕೂಡಲೆ, ಅವನನ್ನು ಕೊಂದುಹಾಕಿರಿ, ಭಯಪಡಬೇಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ, ಧೈರ್ಯವಾಗಿರಿ, ಶೂರರಾಗಿರಿ,” ಎಂದು ಹೇಳಿದನು.</verse>
				<verse number="29">ಅಬ್ಷಾಲೋಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆಲ್ಲರೂ ಎದ್ದು, ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು.</verse>
				<verse number="30">ಅವರು ದಾರಿಯಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಕೊಂದುಹಾಕಿದ್ದಾನೆ, ಒಬ್ಬನಾದರೂ ಉಳಿಯಲಿಲ್ಲ,” ಎಂಬ ವರ್ತಮಾನ ಬಂತು.</verse>
				<verse number="31">ಆಗ ಅರಸನು ಎದ್ದು, ತನ್ನ ವಸ್ತ್ರಗಳನ್ನು ಹರಿದುಕೊಂಡು ನೆಲದ ಮೇಲೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಅವನ ಸುತ್ತಲು ನಿಂತರು.</verse>
				<verse number="32">ಆದರೆ ದಾವೀದನ ಸಹೋದರನಾದ ಶಿಮೆಯನ ಮಗನಾಗಿರುವ ಯೋನಾದಾಬನು ದಾವೀದನಿಗೆ, “ಒಡೆಯನೇ, ನನ್ನ ಅರಸನ ಪುತ್ರರೆಲ್ಲರನ್ನು ಕೊಂದು ಹಾಕಿದ್ದಾರೆಂದು ನೆನಸಬೇಡ. ಅಮ್ನೋನನು ಮಾತ್ರವೇ ಸತ್ತನು. ಏಕೆಂದರೆ ಅಬ್ಷಾಲೋಮನು ತನ್ನ ಸಹೋದರಿಯಾದ ತಾಮಾರಳನ್ನು ಅಮ್ಮೋನನು ಬಲಾತ್ಕಾರ ಮಾಡಿದ ದಿನ ಮೊದಲುಗೊಂಡು ಈ ಕಾರ್ಯವನ್ನು ಮಾಡುವುದಕ್ಕೆ ತನ್ನ ಮನಸ್ಸಿನಲ್ಲಿ ನಿಶ್ಚಯಮಾಡಿಕೊಂಡಿದ್ದನು.</verse>
				<verse number="33">ಆದ್ದರಿಂದ ಅರಸನಾದ ನನ್ನ ಒಡೆಯನೇ, ಅರಸನ ಮಕ್ಕಳೆಲ್ಲರು ಸತ್ತರೆಂಬುವ ಮಾತನ್ನು ನಿನ್ನ ಮನಸ್ಸಿನಲ್ಲಿಡಬೇಡ. ಏಕೆಂದರೆ ಅಮ್ನೋನನು ಒಬ್ಬನೇ ಸತ್ತನು,” ಎಂದನು.</verse>
				<verse number="34">ಅಬ್ಷಾಲೋಮನು ಓಡಿಹೋದನು. ಆಗ ಕಾವಲುಗಾರನು ಕಣ್ಣೆತ್ತಿ ನೋಡುವಾಗ, ಅವನ ಹಿಂಭಾಗದಲ್ಲಿ ಬೆಟ್ಟದ ಮಾರ್ಗವಾಗಿ ಅನೇಕ ಜನರು ಬರುತ್ತಿದ್ದರು. ಕಾವಲುಗಾರನು ಹೋಗಿ ಅರಸನಿಗೆ, “ನಾನು ಬೆಟ್ಟದ ಬದಿಯಲ್ಲಿರುವ ಹೋರೋನೈಮ್ ದಿಕ್ಕಿನಲ್ಲಿ ಮನುಷ್ಯರನ್ನು ಕಂಡೆನು,” ಎಂದು ಹೇಳಿದನು.</verse>
				<verse number="35">ಆಗ ಯೋನಾದಾಬನು ಅರಸನಿಗೆ, “ಅರಸನ ಪುತ್ರರು ಬರುತ್ತಿದ್ದಾರೆ. ನಿಮ್ಮ ಸೇವಕನು ಹೇಳಿದ ಹಾಗೆಯೇ ಆಯಿತು,” ಎಂದನು.</verse>
				<verse number="36">ಅವನು ಮಾತನಾಡಿ ತೀರಿಸಿದಾಗ, ಅರಸನ ಪುತ್ರರು ಬಂದು ಸ್ವರವೆತ್ತಿ ಅತ್ತರು. ಅರಸನೂ, ಅವನ ಸಮಸ್ತ ಸೇವಕರೂ ಮಹಾಧ್ವನಿಯಿಂದ ಅತ್ತರು.</verse>
				<verse number="37">ಆದರೆ ಅಬ್ಷಾಲೋಮನು ಓಡಿಹೋಗಿ ಗೆಷೂರಿನ ಅರಸನಾಗಿರುವ ಅಮ್ಮೀಹೂದನ ಮಗ ತಲ್ಮಾಯನ ಬಳಿಗೆ ಹೋದನು. ದಾವೀದನು ಬಹಳ ದಿನಗಳವರೆಗೆ ತನ್ನ ಮಗನಿಗಾಗಿ ದುಃಖಪಡುತ್ತಿದ್ದನು.</verse>
				<verse number="38">ಹೀಗೆಯೇ ಅಬ್ಷಾಲೋಮನು ಗೆಷೂರಿಗೆ ಓಡಿಹೋಗಿ ಅಲ್ಲಿ ಮೂರು ವರ್ಷ ಇದ್ದನು.</verse>
				<verse number="39">ಆದರೆ ಅರಸನಾದ ದಾವೀದನು ಅಮ್ನೋನನ ಸಾವಿನ ದುಃಖ ಶಮನವಾದ ಮೇಲೆ ಅಬ್ಷಾಲೋಮನ ಬಳಿಗೆ ಹೋಗಲು ಬಯಸಿದನು.</verse>
			</chapter>
			<chapter number="14">
				<verse number="1">ಅರಸನಾದ ದಾವೀದನ ಹೃದಯವು ಅಬ್ಷಾಲೋಮನ ಕಡೆಗೆ ಇರುವುದನ್ನು ಚೆರೂಯಳ ಮಗ ಯೋವಾಬನಿಗೆ ತಿಳಿಯಿತು.</verse>
				<verse number="2">ಆದುದರಿಂದ ಯೋವಾಬನು ತೆಕೋವಗೆ ಮನುಷ್ಯರನ್ನು ಕಳುಹಿಸಿ, ಅಲ್ಲಿಂದ ಒಬ್ಬ ಜ್ಞಾನವುಳ್ಳ ಸ್ತ್ರೀಯನ್ನು ಕರಿಸಿ ಅವಳಿಗೆ, “ನೀನು ಗೋಳಾಡುವವಳ ಹಾಗೆ ನಟಿಸಿ, ದುಃಖ ವಸ್ತ್ರಗಳನ್ನು ಧರಿಸಿಕೋ; ತಲೆಗೆ ಎಣ್ಣೆಯನ್ನು ಹಚ್ಚಿಕೊಳ್ಳದೆ, ಸತ್ತವನಿಗೋಸ್ಕರ ಅನೇಕ ದಿವಸಗಳಿಂದ ದುಃಖಿಸುವವಳ ಹಾಗಿದ್ದು,</verse>
				<verse number="3">ಅರಸನ ಬಳಿಗೆ ಹೋಗಿ ಅವನ ಸಂಗಡ ಈ ಪ್ರಕಾರ ಮಾತನಾಡು,” ಎಂದು ಹೇಳಿ ಯೋವಾಬನು ಅವಳಿಗೆ ಕಲಿಸಿಕೊಟ್ಟನು.</verse>
				<verse number="4">ಹಾಗೆಯೇ ತೆಕೋವದ ಆ ಸ್ತ್ರೀಯು ಅರಸನ ಸಂಗಡ ಮಾತನಾಡಿದಳು. ಮೋರೆ ಕೆಳಗಾಗಿ ನೆಲಕ್ಕೆ ಬಿದ್ದು ವಂದಿಸಿ, “ಅರಸನೇ, ಸಹಾಯಮಾಡು,” ಎಂದಳು.</verse>
				<verse number="5">ಅರಸನು ಅವಳಿಗೆ, “ನಿನಗೆ ಏನಾಯಿತು?” ಎಂದನು. ಅದಕ್ಕವಳು, “ನಾನು ನಿಶ್ಚಯವಾಗಿ ವಿಧವೆಯಾದ ಸ್ತ್ರೀಯು. ನನ್ನ ಗಂಡನು ಸತ್ತುಹೋಗಿದ್ದಾನೆ.</verse>
				<verse number="6">ಆದರೆ ನಿನ್ನ ಸೇವಕಳಿಗೆ ಇಬ್ಬರು ಪುತ್ರರಿದ್ದರು. ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು. ಅವರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ, ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು.</verse>
				<verse number="7">ಆದ್ದರಿಂದ ಕುಟುಂಬದವರೆಲ್ಲರು ನಿನ್ನ ಸೇವಕಿಯ ವಿರೋಧವಾಗಿ ಎದ್ದು, ‘ತನ್ನ ಸಹೋದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ಅವನನ್ನು ಒಪ್ಪಿಸಿಕೊಡು, ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥವಿಲ್ಲದ ಹಾಗೆ ಮಾಡಿಬಿಡುತ್ತೇವೆ’ ಎನ್ನುತ್ತಾರೆ. ಹೀಗೆಯೇ ಅವರು ನನಗೆ ಉಳಿದಿರುವ ಒಂದು ಕೆಂಡವನ್ನು ಆರಿಸಿ, ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ, ಸಂತಾನವನ್ನೂ ಅಳಿಸಬೇಕೆಂದಿದ್ದಾರೆ,” ಎಂದಳು.</verse>
				<verse number="8">ಆಗ ಅರಸನು ಆ ಸ್ತ್ರೀಗೆ, “ನೀನು ನಿನ್ನ ಮನೆಗೆ ಹೋಗು; ನಾನು ನಿನ್ನ ವಿಷಯವಾಗಿ ಆಜ್ಞಾಪಿಸುತ್ತೇನೆ,” ಎಂದನು.</verse>
				<verse number="9">ಆದರೆ ತೆಕೋವದ ಸ್ತ್ರೀಯು ಅರಸನಿಗೆ, “ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ, ನನ್ನ ತಂದೆಯ ಮನೆಯ ಮೇಲೆಯೂ ಇರಲಿ. ಅರಸನೂ, ಅವನ ಸಿಂಹಾಸನವೂ ನಿರಪರಾಧವಾಗಿರಲಿ,” ಎಂದಳು.</verse>
				<verse number="10">ಅದಕ್ಕೆ ಅರಸನು, “ಯಾವನಾದರೂ ನಿನಗೆ ಏನಾದರೂ ಹೇಳಿದರೆ, ಅವನನ್ನು ನನ್ನ ಬಳಿಗೆ ಕರೆದುಕೊಂಡು ಬಾ. ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದೆ ಇರುವನು,” ಎಂದನು.</verse>
				<verse number="11">ಆಕೆ, “ಹಾಗಾದರೆ ನನ್ನ ಮಗನು ಸಾಯದಂತೆ ನಾಶನಕ್ಕೆ ನಾಶನವನ್ನು ಕೂಡಿಸುವ ಸೇಡುತೀರಿಸುವವರನ್ನು ತಡೆಯಲು ಅರಸನು ತನ್ನ ದೇವರಾದ ಯೆಹೋವ ದೇವರನ್ನು ಬೇಡಿಕೊಳ್ಳಲಿ,” ಎಂದಳು. ಅದಕ್ಕೆ ದಾವೀದನು, “ಯೆಹೋವ ದೇವರ ಜೀವದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ,” ಎಂದನು.</verse>
				<verse number="12">ಆಗ ಆ ಸ್ತ್ರೀಯು, “ಅರಸನಾದ ನನ್ನ ಒಡೆಯನ ಸಂಗಡ ನಿನ್ನ ದಾಸಿಯು ಒಂದು ಮಾತನ್ನು ಹೇಳುವುದಕ್ಕೆ ಅಪ್ಪಣೆ ಆಗಬೇಕು,” ಎಂದಳು. ಆಗ ಅವನು, “ಹೇಳು,” ಎಂದನು.</verse>
				<verse number="13">ಆಗ ಆ ಸ್ತ್ರೀಯು, “ಹಾಗಾದರೆ, ಏಕೆ ದೇವಜನರಿಗೆ ವಿರೋಧವಾಗಿ ಅಂಥಾ ಕಾರ್ಯವನ್ನು ನೀನು ನಡೆಸುವುದೇನು? ಅರಸನು ತಾನು ಬಹಿಷ್ಕರಿಸಿದ ಮಗನನ್ನು ತಿರುಗಿ ಸೇರಿಸಿಕೊಳ್ಳದೆ ಹೋದದ್ದರಿಂದ, ತನ್ನನ್ನು ತಾನೇ ಅಪರಾಧಿ ಎಂದು ತೀರ್ಪುಮಾಡಿದ ಹಾಗಾಯಿತು.</verse>
				<verse number="14">ನಾವೆಲ್ಲರೂ ಸಾಯುವುದು ಅವಶ್ಯವೇ. ನಾವು ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಹಾಗೆ ಯಾರ ಪ್ರಾಣವನ್ನೂ ತೆಗೆಯ ಬಯಸುವವರಲ್ಲ. ಅದಕ್ಕೆ ಬದಲಾಗಿ ಬಹಿಷ್ಕಾರವಾದವವರನ್ನು ತಿರುಗಿ ತಮ್ಮ ಬಳಿಗೆ ಬರುವಂತೆ ದೇವರು ಸದುಪಾಯಗಳನ್ನು ಕಲ್ಪಿಸುವವರಾಗಿದ್ದಾರೆ.</verse>
				<verse number="15">“ಆದ್ದರಿಂದ ಈಗ ಜನರು ನನ್ನನ್ನು ಭಯಪಡಿಸಿದ್ದರಿಂದ, ಈ ಕಾರ್ಯವನ್ನು ಕುರಿತು ನನ್ನ ಒಡೆಯನಾದ ಅರಸನ ಸಂಗಡ ನಿನ್ನ ದಾಸಿಯಾದ ನಾನು ಮಾತಾನಾಡುವುದಕ್ಕೆ ಬಂದೆನು. ‘ನಿನ್ನ ದಾಸಿಯಾದ ನಾನು ಅರಸನ ಬಳಿಗೆ ಹೋಗುತ್ತೇನೆ. ಒಂದು ವೇಳೆ ಅರಸನು ತನ್ನ ದಾಸಿಯ ಕಾರ್ಯವನ್ನು ನೆರವೇರಿಸಿಯಾನು.</verse>
				<verse number="16">ಏಕೆಂದರೆ ಅರಸನು ಕೇಳಿ ನನ್ನನ್ನೂ, ನನ್ನ ಮಗನನ್ನೂ ದೇವರ ಬಾಧ್ಯತೆಯಲ್ಲಿಂದ ನಾಶಮಾಡಬೇಕೆಂದಿರುವ ಮನುಷ್ಯರ ಕೈಯಿಂದ ದಾಸಿಯನ್ನು ತಪ್ಪಿಸುವನು,’ ಎಂದುಕೊಂಡೆನು.</verse>
				<verse number="17">“ನಿನ್ನ ದಾಸಿಯು, ‘ಅರಸನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ. ಏಕೆಂದರೆ ಒಳ್ಳೆಯದನ್ನೂ, ಕೆಟ್ಟದ್ದನ್ನೂ ಕೇಳುವುದಕ್ಕೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ ಮತ್ತು ನಿನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರಲಿ,’ ಎಂದಳು.”</verse>
				<verse number="18">ಆಗ ಅರಸನು ಉತ್ತರವಾಗಿ ಆ ಸ್ತ್ರೀಗೆ, “ನಾನು ನಿನ್ನಿಂದ ಕೇಳುವುದನ್ನು ನನಗೆ ಮರೆಮಾಡಬೇಡ,” ಎಂದನು. ಅದಕ್ಕವಳು, “ಅರಸನಾದ ನನ್ನ ಒಡೆಯನು ಮಾತನಾಡಲಿ,” ಎಂದಳು.</verse>
				<verse number="19">ಅದಕ್ಕೆ ಅರಸನು, “ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ?” ಎಂದು ಕೇಳಿದನು. ಆ ಸ್ತ್ರೀಯು ಉತ್ತರವಾಗಿ, “ನಿನ್ನ ಜೀವದಾಣೆ, ಅರಸನಾದ ನನ್ನ ಒಡೆಯನೇ, ನೀನು ಒಂದು ಮಾತು ಹೇಳಿದರೆ, ನಾವು ಅದನ್ನು ಬಿಟ್ಟು ಎಡಕ್ಕಾದರೂ, ಬಲಕ್ಕಾದರೂ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ; ಏಕೆಂದರೆ ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ, ಈ ಎಲ್ಲಾ ಮಾತುಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.</verse>
				<verse number="20">ಈ ಮಾತನ್ನು ರೂಪಕವಾಗಿ ತಿರುಗಿಸುವುದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿಯಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುವುದಕ್ಕೆ ದೇವದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ,” ಎಂದಳು.</verse>
				<verse number="21">ಆದ್ದರಿಂದ ಅರಸನು ಯೋವಾಬನಿಗೆ, “ನಾನು ಈ ಕಾರ್ಯವನ್ನು ಮಾಡಿದೆನು. ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮನನ್ನು ತಿರುಗಿ ಕರೆದುಕೊಂಡು ಬಾ,” ಎಂದನು.</verse>
				<verse number="22">ಆಗ ಯೋವಾಬನು ಮೋರೆ ಕೆಳಗಾಗಿ ನೆಲದ ಮೇಲೆ ಬಿದ್ದು ವಂದಿಸಿದನು. ಯೋವಾಬನು, “ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ, ನನ್ನ ಒಡೆಯನಾದ ಅರಸನೇ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತೆಂಬುದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು,” ಎಂದನು.</verse>
				<verse number="23">ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದನು.</verse>
				<verse number="24">ಆದರೆ ಅರಸನು, “ಅವನು ತನ್ನ ಮನೆಗೆ ತಿರುಗಿ ಹೋಗಲಿ. ಅವನು ನನ್ನ ಮುಖವನ್ನು ನೋಡಬಾರದು,” ಎಂದನು. ಆದ್ದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿಹೋದನು.</verse>
				<verse number="25">ಸಮಸ್ತ ಇಸ್ರಾಯೇಲಿನಲ್ಲಿ ಬಹಳ ಹೊಗಳಿಕೆಗೆ ಪಾತ್ರನಾದ ಅಬ್ಷಾಲೋಮನಂಥ ಸೌಂದರ್ಯವುಳ್ಳವನು ಒಬ್ಬನೂ ಇರಲಿಲ್ಲ. ಅವನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಅವನಲ್ಲಿ ಒಂದು ಕಳಂಕವಾದರೂ ಇಲ್ಲದೆ ಇತ್ತು.</verse>
				<verse number="26">ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರ್ಷದ ಕೊನೆಯಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ರಾಜರ ತೂಕದ ಪ್ರಕಾರ ಎರಡು ಕಿಲೋಗ್ರಾಂ ತೂಕವಾಗಿರುತ್ತಿತ್ತು.</verse>
				<verse number="27">ಅಬ್ಷಾಲೋಮನಿಗೆ ಮೂರು ಮಂದಿ ಪುತ್ರರೂ, ತಾಮಾರ್ ಎಂಬ ಒಬ್ಬ ಪುತ್ರಿಯೂ ಹುಟ್ಟಿದರು. ತಾಮಾರಳು ಸೌಂದರ್ಯವುಳ್ಳ ಸ್ತ್ರೀ ಆಗಿದ್ದಳು.</verse>
				<verse number="28">ಅಬ್ಷಾಲೋಮನು ಅರಸನ ಮುಖವನ್ನು ಕಾಣದೆ, ಪೂರ್ಣವಾಗಿ ಎರಡು ವರ್ಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.</verse>
				<verse number="29">ಆದ್ದರಿಂದ ಅಬ್ಷಾಲೋಮನು ಅರಸನ ಬಳಿಗೆ ತನ್ನನ್ನು ಕಳುಹಿಸುವುದಕ್ಕೆ ಯೋವಾಬನನ್ನು ಕರೆಕಳುಹಿಸಿದನು. ಆದರೆ ಅವನು ಅವನ ಬಳಿಗೆ ಬರಲೊಲ್ಲದೆ ಹೋದನು. ಎರಡನೆಯ ಸಾರಿ ಅವನನ್ನು ಕರೆಕಳುಹಿಸಿದನು. ಅವನು ಬರಲೊಲ್ಲದೆ ಹೋದನು.</verse>
				<verse number="30">ಆದ್ದರಿಂದ ಅವನು ತನ್ನ ಸೇವಕರಿಗೆ, “ನೋಡಿರಿ, ನನ್ನ ಹೊಲಕ್ಕೆ ಸಮೀಪವಾಗಿ ಯೋವಾಬನ ಹೊಲವಿದೆ. ಅದರಲ್ಲಿ ಜವೆಗೋಧಿ ಇದೆ. ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ,” ಎಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.</verse>
				<verse number="31">ಆಗ ಯೋವಾಬನು ಎದ್ದು ಅಬ್ಷಾಲೋಮನ ಮನೆಗೆ ಬಂದು ಅವನಿಗೆ, “ನನ್ನ ಹೊಲವನ್ನು ನಿನ್ನ ಸೇವಕರು ಬೆಂಕಿಯಿಂದ ಸುಟ್ಟುಬಿಟ್ಟಿದ್ದೇಕೆ?” ಎಂದು ಕೇಳಿದನು.</verse>
				<verse number="32">ಅಬ್ಷಾಲೋಮನು ಯೋವಾಬನಿಗೆ, “ನಾನು ಗೆಷೂರಿನಿಂದ ಏಕೆ ಬಂದೆನೆಂದು ಅರಸನಿಗೆ ಹೇಳುವುದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ‘ಇಲ್ಲಿಗೆ ಬಾ’ ಎಂದು ನಿನ್ನನ್ನು ಕರೆಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು. ನನ್ನಲ್ಲಿ ಅಕ್ರಮ ಇದ್ದರೆ, ಅವನು ನನ್ನನ್ನು ಕೊಂದು ಹಾಕಲಿ,” ಎಂದನು.</verse>
				<verse number="33">ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ, ಅರಸನು ಅಬ್ಷಾಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗ ನಮಸ್ಕಾರಮಾಡಿದನು. ಆಗ ಅರಸನು ಅಬ್ಷಾಲೋಮನಿಗೆ ಮುದ್ದಿಟ್ಟನು.</verse>
			</chapter>
			<chapter number="15">
				<verse number="1">ಇದರ ತರುವಾಯ ಅಬ್ಷಾಲೋಮನು ತನಗೋಸ್ಕರ ರಥಗಳನ್ನೂ ಕುದುರೆಗಳನ್ನೂ ತನ್ನ ಮುಂದೆ ಓಡುವುದಕ್ಕೆ ಐವತ್ತು ಮಂದಿಯನ್ನೂ ಸಿದ್ಧಮಾಡಿಕೊಂಡನು.</verse>
				<verse number="2">ಇದಲ್ಲದೆ ಅಬ್ಷಾಲೋಮನು ಬೆಳಿಗ್ಗೆ ಎದ್ದು ಬಾಗಿಲ ಬಳಿಯಲ್ಲಿ ನಿಂತುಕೊಂಡು, ವ್ಯಾಜ್ಯ ಉಂಟಾದವನು ಯಾವನಾದರೂ ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವವನಾಗಿದ್ದರೆ ಅವನನ್ನು ಕರೆದು, “ನೀನು ಯಾವ ಪಟ್ಟಣದವನು?” ಎಂದು ಕೇಳಿದನು. ಅದಕ್ಕವನು, “ನಿನ್ನ ಸೇವಕರಾದ ನಾವು ಇಸ್ರಾಯೇಲರ ಇಂಥ ಕುಲಕ್ಕೆ ಸೇರಿದವರು,” ಎಂದು ಉತ್ತರ ಕೊಡುವನು.</verse>
				<verse number="3">ಆಗ ಅಬ್ಷಾಲೋಮನು ಅವನಿಗೆ, “ನೋಡು ನಿನ್ನ ಕಾರ್ಯವು ಒಳ್ಳೆಯದೂ, ನ್ಯಾಯವಾದದದ್ದೂ ಆಗಿದೆ. ಆದರೆ ಅರಸನ ಬಳಿಯಲ್ಲಿ ನಿನ್ನನ್ನು ವಿಚಾರಿಸುವುದಕ್ಕೆ ಯಾವನೂ ಇಲ್ಲ,” ಅನ್ನುವನು.</verse>
				<verse number="4">ಇದಲ್ಲದೆ ಅಬ್ಷಾಲೋಮನು, “ನಾನು ದೇಶದ ಮೇಲೆ ನ್ಯಾಯಾಧಿಪತಿಯಾಗಿ ನೇಮಕವಾಗಿದ್ದರೆ ಎಷ್ಟೋ ಒಳ್ಳೆಯದು. ಆಗ ವ್ಯಾಜ್ಯವಾದರೂ, ನ್ಯಾಯವಿಚಾರಣೆಯಾದರೂ ಇದ್ದ ಪ್ರತಿ ಮನುಷ್ಯನು ನನ್ನ ಬಳಿಗೆ ಬಂದರೆ, ನಾನು ಅವನಿಗೆ ನೀತಿಯಿಂದ ನ್ಯಾಯತೀರಿಸುವೆನು,” ಅನ್ನುವನು.</verse>
				<verse number="5">ಯಾವನಾದರೂ ಅವನಿಗೆ ವಂದಿಸುವುದಕ್ಕೆ ಬಂದರೆ, ಕೂಡಲೆ ತನ್ನ ಕೈಯನ್ನು ಚಾಚಿ ಅಂಥವನನ್ನು ಎತ್ತಿ ಮುದ್ದಿಡುತ್ತಿದ್ದನು.</verse>
				<verse number="6">ಈ ಪ್ರಕಾರ ಅಬ್ಷಾಲೋಮನು ನ್ಯಾಯಕ್ಕೋಸ್ಕರ ಅರಸನ ಬಳಿಗೆ ಬರುವ ಇಸ್ರಾಯೇಲರೆಲ್ಲರಿಗೆ ಮಾಡಿದನು. ಹೀಗೆ ಅಬ್ಷಾಲೋಮನು ಇಸ್ರಾಯೇಲರ ಹೃದಯಗಳನ್ನು ಗೆದ್ದುಕೊಂಡನು.</verse>
				<verse number="7">ನಾಲ್ಕು ವರ್ಷಗಳಾದ ತರುವಾಯ ಅಬ್ಷಾಲೋಮನು ಅರಸನಿಗೆ, “ನಾನು ಯೆಹೋವ ದೇವರಿಗೆ ಮಾಡಿಕೊಂಡಿದ್ದ ನನ್ನ ಹರಕೆಯನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವುದಕ್ಕೆ ಅಪ್ಪಣೆಕೊಡಬೇಕು.</verse>
				<verse number="8">ಏಕೆಂದರೆ, ‘ಯೆಹೋವ ದೇವರು ನನ್ನನ್ನು ಯೆರೂಸಲೇಮಿಗೆ ತಿರುಗಿ ನಿಜವಾಗಿಯೂ ಬರಮಾಡಿದರೆ, ನಾನು ಯೆಹೋವ ದೇವರನ್ನು ಸೇವಿಸುವೆನು,’ ಎಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಹರಕೆ ಮಾಡಿಕೊಂಡಿದ್ದನು,” ಎಂದನು.</verse>
				<verse number="9">ಅರಸನು ಅವನಿಗೆ, “ಸಮಾಧಾನವಾಗಿ ಹೋಗು,” ಎಂದನು. ಆಗ ಅವನು ಎದ್ದು ಹೆಬ್ರೋನಿಗೆ ಹೋದನು.</verse>
				<verse number="10">ಅಬ್ಷಾಲೋಮನು ಇಸ್ರಾಯೇಲಿನ ಸಮಸ್ತ ಗೋತ್ರಗಳಿಗೆ ಗೂಢಚಾರರನ್ನು ಕಳುಹಿಸಿ ಅವರಿಗೆ, “ನೀವು ತುತೂರಿಯ ಶಬ್ದ ಕೇಳಿದಾಗ, ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಘೋಷಿಸಿರಿ’ ಎಂದು ಹೇಳಿರಿ,” ಎಂದನು.</verse>
				<verse number="11">ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲಾದ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ಒಳಸಂಚನ್ನು ಏನೂ ತಿಳಿಯದೆ ಯಥಾರ್ಥ ಮನಸ್ಸುಳ್ಳವರಾಗಿದ್ದರು.</verse>
				<verse number="12">ಅಬ್ಷಾಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ, ದಾವೀದನ ಆಲೋಚನಾಗಾರನಾಗಿರುವ ಗಿಲೋವಿನ ಅಹೀತೋಫೆಲನನ್ನು ಗಿಲೋವೆಂಬ ಅವನ ಪಟ್ಟಣದಿಂದ ಕರೆಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ, ಒಳಸಂಚಿನ ಗುಂಪು ಬಲವಾಯಿತು.</verse>
				<verse number="13">ದಾವೀದನ ಬಳಿಗೆ ಒಬ್ಬ ದೂತನು ಬಂದು, “ಇಸ್ರಾಯೇಲರ ಹೃದಯಗಳು ಅಬ್ಷಾಲೋಮನ ಕಡೆ ತಿರುಗಿಕೊಂಡಿವೆ,” ಎಂದನು.</verse>
				<verse number="14">ಆಗ ದಾವೀದನು ಯೆರೂಸಲೇಮಿನಲ್ಲಿ ತನ್ನ ಹತ್ತಿರ ಇರುವ ತನ್ನ ಸಮಸ್ತ ಸೇವಕರಿಗೆ, “ಏಳಿರಿ, ನಾವು ಓಡಿಹೋಗೋಣ. ಇಲ್ಲದಿದ್ದರೆ ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಂಡು ಹೋಗಲಾರೆವು. ಅವನು ಫಕ್ಕನೆ ನಮ್ಮನ್ನು ಹಿಡಿದು, ನಮ್ಮ ಮೇಲೆ ಕೇಡನ್ನು ಬರಮಾಡಿ, ಪಟ್ಟಣವನ್ನು ಖಡ್ಗದಿಂದ ಹೊಡೆಯದ ಹಾಗೆ ಹೊರಟು ಹೋಗುವುದಕ್ಕೆ ತ್ವರೆಮಾಡಿರಿ,” ಎಂದನು.</verse>
				<verse number="15">ಆಗ ಅರಸನ ಸೇವಕರು ಅರಸನಿಗೆ, “ಅರಸನಾದ ನಮ್ಮ ಒಡೆಯನು ನಮಗೆ ಏನೇನು ಆಜ್ಞಾಪಿಸುವನೋ, ಅದನ್ನು ಮಾಡುವುದಕ್ಕೆ ನಿನ್ನ ಸೇವಕರು ಸಿದ್ಧವಾಗಿದ್ದೇವೆ,” ಎಂದರು.</verse>
				<verse number="16">ಅರಸನು ಮನೆಗೆ ಕಾವಲಿರುವಂತೆ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ಬಿಟ್ಟು, ಅವನೂ, ಅವನ ಮನೆಯವರೆಲ್ಲರೂ ಅವನ ಹಿಂದೆ ಹೊರಟು ಹೋದರು.</verse>
				<verse number="17">ಅರಸನೂ, ಅವನ ಹಿಂದೆ ಸಮಸ್ತ ಜನರೂ ಹೊರಟುಹೋಗಿ ಪಟ್ಟಣದ ಕಡೆಯ ಮನೆಯ ಬಳಿ ಬಂದು ಅಲ್ಲಿ ನಿಂತರು.</verse>
				<verse number="18">ಅವನ ಸಮಸ್ತ ಸೇವಕರೂ, ಸಮಸ್ತ ಕೆರೇತ್ಯರೂ, ಸಮಸ್ತ ಪೆಲೇತ್ಯರೂ ಅವನ ಹಿಂದೆ ಗತ್ ಊರಿನಿಂದ ಅವನ ಸಂಗಡ ಬಂದ ಗಿತ್ತೀಯರಾದ ಆರುನೂರು ಮಂದಿಯೂ ಅರಸನ ಮುಂದೆ ನಡೆದರು.</verse>
				<verse number="19">ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ಕಂಡು, “ನೀನು ನಮ್ಮ ಸಂಗಡ ಬರುವುದು ಏಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ, ಅರಸನ ಸಂಗಡ ಇರು. ಏಕೆಂದರೆ ನೀನು ವಿದೇಶಿ. ನಿನ್ನ ದೇಶದಿಂದ ಸೆರೆಯಾಳಾಗಿ ಬಂದವನು.</verse>
				<verse number="20">ನೀನು ನಿನ್ನೆ ಬಂದವನು. ನಾನು ಎಲ್ಲಿಗೆ ಹೋಗುತ್ತೇನೋ ನನಗೇ ಗೊತ್ತಿಲ್ಲ. ಆದುದರಿಂದ ನಾನು ನಿನ್ನನ್ನು ನಮ್ಮ ಸಂಗಡ ಸುಮ್ಮನೇ ತಿರುಗಾಡಿಸುವುದು ಏಕೆ? ನೀನು ನಿನ್ನ ಸಹೋದರರನ್ನು ಕರೆದುಕೊಂಡು ಹಿಂದಕ್ಕೆ ಹೋಗು. ದಯೆಯೂ, ನಂಬಿಗಸ್ತಿಕೆಯೂ ನಿನ್ನ ಸಂಗಡ ಇರಲಿ,” ಎಂದನು.</verse>
				<verse number="21">ಆದರೆ ಇತ್ತೈಯೂ ಅರಸನಿಗೆ ಉತ್ತರವಾಗಿ, “ಯೆಹೋವ ದೇವರ ಜೀವದಾಣೆ, ಅರಸನಾದ ನನ್ನ ಒಡೆಯನ ಜೀವದಾಣೆ, ಅರಸನಾದ ನನ್ನ ಒಡೆಯನು ಎಲ್ಲಿ ಇರುವನೋ, ಸಾವಾದರೂ ಬದುಕಾದರೂ ನಿಶ್ಚಯವಾಗಿ ಅಲ್ಲಿ ನಿನ್ನ ಸೇವಕನು ಇರುವನು,” ಎಂದನು.</verse>
				<verse number="22">ಆಗ ದಾವೀದನು ಇತ್ತೈಗೆ, “ನೀನು ಹೋಗಿ ದಾಟು,” ಎಂದನು. ಆದ್ದರಿಂದ ಗಿತ್ತೀಯನಾದ ಇತ್ತೈಯೂ, ಅವನ ಸಮಸ್ತ ಮನುಷ್ಯರೂ, ಅವನ ಸಂಗಡ ಇರುವ ಸಮಸ್ತ ಚಿಕ್ಕವರೂ ಕೂಡ ದಾಟಿಹೋದರು.</verse>
				<verse number="23">ಜನರೆಲ್ಲಾ ದಾಟಿಹೋಗುವಾಗ, ದೇಶದವರೆಲ್ಲಾ ಮಹಾಧ್ವನಿಯಿಂದ ಅತ್ತರು. ಅರಸನು ಕಿದ್ರೋನ್ ಹಳ್ಳವನ್ನು ದಾಟಿದನು. ಹಾಗೆಯೇ ಅವನ ಜನರೆಲ್ಲರೂ ದಾಟಿ ಮರುಭೂಮಿಯ ಮಾರ್ಗವಾಗಿ ನಡೆದುಹೋದರು.</verse>
				<verse number="24">ಚಾದೋಕನೂ, ಅವನ ಸಂಗಡ ಇರುವ ಸಮಸ್ತ ಲೇವಿಯರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಇಳಿಸಿದರು. ಅಬಿಯಾತರನು, ಜನರೆಲ್ಲರು ಪಟ್ಟಣದಿಂದ ದಾಟಿಹೋಗುವವರೆಗೆ ಯಜ್ಞ ಸಮರ್ಪಿಸುತ್ತಾ ಮುಂದೆ ನಡೆಯುತ್ತಿದ್ದನು.</verse>
				<verse number="25">ಆಗ ಅರಸನು ಚಾದೋಕನಿಗೆ, “ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರುಗಿ ತೆಗೆದುಕೊಂಡು ಹೋಗು. ಯೆಹೋವ ದೇವರ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ, ಅವರು ತಿರುಗಿ ನನ್ನನ್ನು ಬರಮಾಡಿ ಅದನ್ನೂ, ಅದರ ವಾಸಸ್ಥಳವನ್ನೂ ನನಗೆ ತೋರಿಸುವರು.</verse>
				<verse number="26">ಒಂದು ವೇಳೆ ಅವರು, ‘ನಿನ್ನಲ್ಲಿ ನನಗೆ ಇಷ್ಟವಿಲ್ಲವೆಂದು’ ಹೇಳಿದರೆ ಇಗೋ, ಅವರು ತಮ್ಮ ದೃಷ್ಟಿಗೆ ತೋಚಿದ ಹಾಗೆ ನನಗೆ ಮಾಡಲಿ,” ಎಂದನು.</verse>
				<verse number="27">ಅರಸನು ಯಾಜಕನಾದ ಚಾದೋಕನಿಗೆ, “ನೀನು ದರ್ಶಿಯಲ್ಲವೇ? ನೀನು ಸಮಾಧಾನದಿಂದ ಪಟ್ಟಣಕ್ಕೆ ತಿರುಗಿ ಹೋಗು; ಇದಲ್ಲದೆ ನಿನ್ನ ಇಬ್ಬರು ಮಕ್ಕಳು ಅಹೀಮಾಚನೂ, ಅಬಿಯಾತರನ ಮಗ ಯೋನಾತಾನನೂ ನಿನ್ನ ಸಂಗಡ ಹೋಗಲಿ.</verse>
				<verse number="28">ನೋಡು, ನನಗೆ ತಿಳಿಸುವುದಕ್ಕೆ ನಿಮ್ಮ ಬಳಿಯಿಂದ ವರ್ತಮಾನ ಬರುವವರೆಗೂ, ನಾನು ಮರುಭೂಮಿಯ ಬಳಿಯಲ್ಲಿ ಇರುವೆನು,” ಎಂದನು.</verse>
				<verse number="29">ಹಾಗೆಯೇ ಚಾದೋಕನೂ, ಅಬಿಯಾತರನೂ ದೇವರ ಮಂಜೂಷವನ್ನು ತಿರುಗಿ ಯೆರೂಸಲೇಮಿಗೆ ತೆಗೆದುಕೊಂಡುಹೋಗಿ ಅಲ್ಲಿದ್ದರು.</verse>
				<verse number="30">ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿಕೊಂಡು, ಬರಿಗಾಲಿನಿಂದ ಎಣ್ಣೆಮರಗಳ ಗುಡ್ಡವನ್ನು ಏರಿದನು. ಅವನ ಸಂಗಡ ಇರುವ ಸಮಸ್ತ ಜನರೂ, ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆ ಏರಿದರು.</verse>
				<verse number="31">ಅಹೀತೋಫೆಲನು ಅಬ್ಷಾಲೋಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾನೆಂದು ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು, “ಯೆಹೋವ ದೇವರೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವನ್ನಾಗಿ ಮಾಡಿಬಿಡು,” ಎಂದನು.</verse>
				<verse number="32">ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿದಾಗ, ಅರ್ಕಿಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅವನನ್ನು ಎದುರುಗೊಳ್ಳಲು ಬಂದನು.</verse>
				<verse number="33">ಆಗ ದಾವೀದನು ಅವನಿಗೆ, “ನೀನು ನನ್ನ ಸಂಗಡ ಬಂದರೆ, ನನಗೆ ಭಾರವಾಗಿರುವೆ.</verse>
				<verse number="34">ನೀನು ಪಟ್ಟಣಕ್ಕೆ ತಿರುಗಿ ಹೋಗಿ ಅಬ್ಷಾಲೋಮನಿಗೆ, ‘ಅರಸನೇ, ನಾನು ನಿನ್ನ ಸೇವಕನಾಗಿರುವೆನು. ನಾನು ಇಂದಿನವರೆಗೂ ಹೇಗೆ ನಿನ್ನ ತಂದೆಗೆ ಸೇವಕನಾಗಿದ್ದೆನೋ, ಹಾಗೆಯೇ ಈಗ ನಿನ್ನ ಸೇವಕನಾಗಿರುವೆನು,’ ಎಂದು ಹೇಳಿದರೆ, ನೀನು ನನಗೋಸ್ಕರ ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಬಹುದು.</verse>
				<verse number="35">ಅಲ್ಲಿ ಯಾಜಕರಾದ ಚಾದೋಕನೂ, ಅಬಿಯಾತರನೂ ನಿನ್ನ ಬಳಿಯಲ್ಲಿ ಇಲ್ಲವೋ? ಆದ್ದರಿಂದ ನೀನು ಅರಸನ ಮನೆಯಲ್ಲಿ ಯಾವ ವರ್ತಮಾನವನ್ನು ಕೇಳುತ್ತೀಯೋ, ಅದನ್ನು ಯಾಜಕರಾದ ಚಾದೋಕನಿಗೂ, ಎಬ್ಯಾತಾರನಿಗೂ ತಿಳಿಸು.</verse>
				<verse number="36">ಅಲ್ಲಿ ಅವರ ಸಂಗಡ ಅವರ ಇಬ್ಬರು ಮಕ್ಕಳು ಇದ್ದಾರೆ. ಚಾದೋಕನ ಮಗ ಅಹೀಮಾಚನೂ, ಅಬಿಯಾತರನ ಮಗ ಯೋನಾತಾನನೂ. ನೀವು ಕೇಳಿದ ವರ್ತಮಾನವನ್ನೆಲ್ಲಾ ಅವರ ಕೈಯಿಂದ ನನಗೆ ಹೇಳಿ ಕಳುಹಿಸಬೇಕು,” ಎಂದನು.</verse>
				<verse number="37">ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣದೊಳಗೆ ಬಂದನು. ಆಗ ಅಬ್ಷಾಲೋಮನು ಯೆರೂಸಲೇಮಿಗೆ ಬಂದನು.</verse>
			</chapter>
			<chapter number="16">
				<verse number="1">ದಾವೀದನು ಬೆಟ್ಟದ ತುದಿಯಿಂದ ಸ್ವಲ್ಪ ದೂರ ಹೋದಾಗ, ಮೆಫೀಬೋಶೆತನ ಸೇವಕ ಚೀಬನು ತಡಿಹಾಕಿದ ಎರಡು ಕತ್ತೆಗಳನ್ನು ಹೊಡೆದುಕೊಂಡು ಬಂದು, ಅವನನ್ನು ಎದುರುಗೊಂಡನು. ಅವುಗಳ ಮೇಲೆ ಇನ್ನೂರು ರೊಟ್ಟಿಗಳೂ, ಒಣಗಿದ ನೂರು ದ್ರಾಕ್ಷಿ ಗೊಂಚಲುಗಳೂ, ಬೇಸಿಗೆ ಕಾಲದ ನೂರು ಹಣ್ಣುಗಳೂ, ಒಂದು ಬುದ್ದಲಿ ದ್ರಾಕ್ಷಾರಸವೂ ಇದ್ದವು.</verse>
				<verse number="2">ಅರಸನು ಚೀಬನಿಗೆ, “ಇವು ಏಕೆ,” ಎಂದನು. ಅದಕ್ಕೆ ಚೀಬನು, “ಕತ್ತೆಗಳನ್ನು ಅರಸನ ಮನೆಯವರು ಸವಾರಿಮಾಡುವುದಕ್ಕೆ, ಆ ರೊಟ್ಟಿಗಳೂ, ಬೇಸಿಗೆ ಕಾಲದ ಫಲಗಳೂ ಜನರಿಗೆ ತಿನ್ನುವುದಕ್ಕೆ, ದ್ರಾಕ್ಷಾರಸವು ಮರುಭೂಮಿಯಲ್ಲಿ ದಣಿದವರು ಕುಡಿಯುವುದಕ್ಕೆ,” ಎಂದನು.</verse>
				<verse number="3">ಆಗ ಅರಸನು ಅವನನ್ನು, “ನಿನ್ನ ಯಜಮಾನನ ಪುತ್ರನು ಎಲ್ಲಿದ್ದಾನೆ?” ಎಂದು ಕೇಳಿದನು. ಚೀಬನು ಅರಸನಿಗೆ, “ಅವನು ಯೆರೂಸಲೇಮಿನಲ್ಲಿದ್ದಾನೆ. ಏಕೆಂದರೆ ಈ ಹೊತ್ತು ಇಸ್ರಾಯೇಲಿನ ಮನೆಯವರು ನನ್ನ ತಂದೆಯ ರಾಜ್ಯವನ್ನು ನನಗೆ ತಿರುಗಿ ಕೊಡುವರೆಂದು ಹೇಳಿಕೊಂಡನು,” ಎಂದನು.</verse>
				<verse number="4">ಆಗ ಅರಸನು ಚೀಬನಿಗೆ, “ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲವೂ ನಿನಗುಂಟಾಯಿತು,” ಎಂದನು. ಅದಕ್ಕೆ ಚೀಬನು, “ಅರಸನಾದ ನನ್ನ ಒಡೆಯನೇ, ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದನು.</verse>
				<verse number="5">ಅರಸನಾದ ದಾವೀದನು ಬಹುರೀಮಿನವರೆಗೂ ಬಂದಾಗ, ಸೌಲನ ಗೋತ್ರದವನಾದ ಗೇರನ ಮಗ ಶಿಮ್ಮಿ ಎಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು.</verse>
				<verse number="6">ದಾವೀದನ ಎಡಬಲದಲ್ಲಿ ಸೈನಿಕರೂ, ವಿಶೇಷ ಕಾವಲುಗಾರರೂ ಇದ್ದರು. ಆದರೂ ಶಿಮ್ಮಿಯು ದಾವೀದನ ಮೇಲೆಯೂ, ಅವನ ಅಧಿಕಾರಿಗಳ ಮೇಲೆಯೂ ಕಲ್ಲುಗಳನ್ನು ಎಸೆದನು.</verse>
				<verse number="7">ಶಿಮ್ಮಿಯು ಅರಸನನ್ನು ದೂಷಿಸುತ್ತಾ, “ಕೊಲೆಗಾರನೇ, ನೀಚನೇ, ಹೊರಟು ಹೋಗು; ಹೊರಟು ಹೋಗು.</verse>
				<verse number="8">ಯೆಹೋವ ದೇವರು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರುಗಿ ಬರಮಾಡಿ, ರಾಜ್ಯವನ್ನು ನಿನ್ನ ಮಗ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟರು. ಏಕೆಂದರೆ ನೀನು ಕೊಲೆಗಾರನಾದುದರಿಂದ, ನಿನ್ನ ಕೇಡಿನಲ್ಲಿ ನೀನು ಸಿಕ್ಕಿಕೊಂಡೆ,” ಎಂದನು.</verse>
				<verse number="9">ಆಗ ಚೆರೂಯಳ ಮಗ ಅಬೀಷೈಯನು ಅರಸನಿಗೆ, “ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ದೂಷಿಸುವುದೇನು? ನಾನು ದಾಟಿ ಹೋಗಿ ಅವನ ತಲೆಯನ್ನು ತೆಗೆದುಕೊಳ್ಳಲು ಅಪ್ಪಣೆ ಆಗಲಿ,” ಎಂದನು.</verse>
				<verse number="10">ಆದರೆ ಅರಸನು, “ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ. ಏಕೆಂದರೆ, ‘ದಾವೀದನನ್ನು ದೂಷಿಸು,’ ಎಂದು ಯೆಹೋವ ದೇವರು ಅವನಿಗೆ ಹೇಳಿದ್ದಾರೆ. ಹಾಗಾದರೆ, ‘ಏಕೆ ಹೀಗೆ ಮಾಡುತ್ತೀ?’ ಎಂದು ಹೇಳುವವನ್ಯಾರು?” ಎಂದನು.</verse>
				<verse number="11">ದಾವೀದನು ಅಬೀಷೈಯನಿಗೂ, ತನ್ನ ಸಮಸ್ತ ಸೇವಕರಿಗೂ, “ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ, ಎಷ್ಟೋ ಅಧಿಕವಾಗಿ ಬೆನ್ಯಾಮೀನನಾದವನು ಈಗ ಏನು ಮಾಡಿಯಾನು? ಅವನನ್ನು ಬಿಟ್ಟುಬಿಡಿರಿ. ಅವನು ದೂಷಿಸಲಿ. ಏಕೆಂದರೆ ಯೆಹೋವ ದೇವರು ಅವನಿಗೆ ಹಾಗೆಯೇ ಹೇಳಿದ್ದಾರೆ.</verse>
				<verse number="12">ಒಂದು ವೇಳೆ ಯೆಹೋವ ದೇವರು ನನ್ನ ಕಷ್ಟವನ್ನು ಕಂಡು, ಈ ದಿನದಲ್ಲಿ ಅವನು ಮಾಡಿದ ಶಾಪಕ್ಕೆ ಪ್ರತಿಯಾಗಿ, ನನಗೆ ಒಳ್ಳೆಯದನ್ನು ಮಾಡಬಹುದು,” ಎಂದನು.</verse>
				<verse number="13">ದಾವೀದನೂ, ಅವನ ಸೇವಕರೂ ಹಾದಿ ಹಿಡಿದು ಹೋಗುವಾಗ, ಶಿಮ್ಮಿ ಬೆಟ್ಟದ ಓರೆಯಲ್ಲಿ ಬಂದು, ಅವನಿಗೆದುರಾಗಿ ನಡೆದನು. ಅವನು ದಾವೀದನನ್ನು ದೂಷಿಸಿ, ಮಣ್ಣನ್ನು ತೂರಿ, ಕಲ್ಲುಗಳನ್ನು ದಾವೀದನ ಮೇಲೆ ಎಸೆದನು.</verse>
				<verse number="14">ಅರಸನೂ, ಅವನ ಸಂಗಡದಲ್ಲಿರುವ ಸಮಸ್ತ ಜನರೂ ನಡೆದು ದಣಿದಿದ್ದರಿಂದ ಅಲ್ಲಿ ವಿಶ್ರಮಿಸಿಕೊಂಡರು.</verse>
				<verse number="15">ಅಬ್ಷಾಲೋಮನೂ, ಇಸ್ರಾಯೇಲರಾದ ಸಮಸ್ತ ಜನರೂ, ಅವನ ಸಂಗಡ ಅಹೀತೋಫೆಲನೂ ಯೆರೂಸಲೇಮಿಗೆ ಬಂದರು.</verse>
				<verse number="16">ಅರ್ಕಿಯನಾದ ಹೂಷೈಯು ಎಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದಾಗ, ಹೂಷೈ ಅಬ್ಷಾಲೋಮನಿಗೆ, “ಅರಸನು ಬಾಳಲಿ, ಅರಸನು ಬಾಳಲಿ,” ಎಂದನು.</verse>
				<verse number="17">ಆಗ ಅಬ್ಷಾಲೋಮನು ಹೂಷೈಯಿಗೆ, “ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನ ಸಂಗಡ ಏಕೆ ಹೋಗಲಿಲ್ಲ,” ಎಂದನು.</verse>
				<verse number="18">ಹೂಷೈ ಅಬ್ಷಾಲೋಮನಿಗೆ, “ಹಾಗಲ್ಲ, ಯೆಹೋವ ದೇವರು ಈ ಜನರೂ, ಇಸ್ರಾಯೇಲಿನ ಸಮಸ್ತ ಮನುಷ್ಯರೂ ಯಾರನ್ನು ಆಯ್ದುಕೊಳ್ಳುವರೋ, ನಾನೂ ಅವನ ಪಕ್ಷದವನಾಗಿರುವೆನು. ನಾನು ಅವನ ಬಳಿಯಲ್ಲಿ ಇರುವೆನು.</verse>
				<verse number="19">ಇದಲ್ಲದೆ ನಾನು ಯಾರನ್ನು ಸೇವಿಸತಕ್ಕದ್ದು? ಅವನ ಮಗನ ಸಮ್ಮುಖದಲ್ಲಿ ಅಲ್ಲವೇ? ನಾನು ನಿನ್ನ ತಂದೆಯ ಸಮ್ಮುಖದಲ್ಲಿ ಹೇಗೆ ಸೇವಿಸಿದೆನೋ ಹಾಗೆಯೇ ನಿನ್ನ ಸಮ್ಮುಖದಲ್ಲಿ ಇರುವೆನು,” ಎಂದನು.</verse>
				<verse number="20">ಆಗ ಅಬ್ಷಾಲೋಮನು ಅಹೀತೋಫೆಲನಿಗೆ, “ನಾವು ಮಾಡಬೇಕಾದದ್ದನ್ನು ನೀವು ಯೋಚನೆ ಮಾಡಿ ಹೇಳಿರಿ,” ಎಂದನು.</verse>
				<verse number="21">ಅಹೀತೋಫೆಲನು ಅಬ್ಷಾಲೋಮನಿಗೆ, “ಮನೆಗೆ ಕಾವಲಿಟ್ಟ ನಿನ್ನ ತಂದೆಯ ಉಪಪತ್ನಿಯರ ಸಂಗಡ ಮಲಗು; ಆಗ ನಿನ್ನ ತಂದೆ ನಿನ್ನನ್ನು ತನ್ನ ಶತ್ರುವನ್ನಾಗಿ ಮಾಡಿದನೆಂದು ಎಲ್ಲ ಇಸ್ರಾಯೇಲರಿಗೆ ತಿಳಿಯುವುದು. ಆಗ ನಿನ್ನ ಜನರ ಕೈಗಳೂ ಬಲವಾಗುವುವು,” ಎಂದನು.</verse>
				<verse number="22">ಹಾಗೆಯೇ ಅವರು ಅಬ್ಷಾಲೋಮನ ಮನೆಯ ಮೇಲೆ ಡೇರೆ ಹಾಕಿದರು. ಅಲ್ಲಿ ಅಬ್ಷಾಲೋಮನು ಸಮಸ್ತ ಇಸ್ರಾಯೇಲರ ಕಣ್ಣುಗಳ ಮುಂದೆ ತನ್ನ ತಂದೆಯ ಉಪಪತ್ನಿಗಳ ಸಂಗಡ ಮಲಗಿದನು.</verse>
				<verse number="23">ಆ ದಿವಸಗಳಲ್ಲಿ ಅಹೀತೋಫೆಲನು ತಿಳಿಸಿದ ಆಲೋಚನೆಯು ದೇವರನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಗಳನ್ನು ದಾವೀದನೂ, ಅಬ್ಷಾಲೋಮನೂ ಹಾಗೆಯೇ ಗೌರವಿಸುತ್ತಿದ್ದರು.</verse>
			</chapter>
			<chapter number="17">
				<verse number="1">ಅಹೀತೋಫೆಲನು ಅಬ್ಷಾಲೋಮನಿಗೆ, “ಅಪ್ಪಣೆಯಾದರೆ ನಾನು ಹನ್ನೆರಡು ಸಾವಿರ ಜನರನ್ನು ಆಯ್ದುಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು.</verse>
				<verse number="2">ಅವನು ದಣಿದು ಅವನ ಕೈ ದುರ್ಬಲವಾಗಿರುವಾಗ, ಹೋಗಿ ಅವನ ಮೇಲೆ ಬಿದ್ದು ಅವನನ್ನು ಹೆದರಿಸುವೆನು. ಆಗ ಅವನ ಸಂಗಡ ಇರುವ ಜನರೆಲ್ಲರು ಓಡಿಹೋಗುವರು.</verse>
				<verse number="3">ಆಗ ನಾನು ಅರಸನನ್ನು ಮಾತ್ರ ಹೊಡೆದು, ಜನರೆಲ್ಲರನ್ನು ತಿರುಗಿ ನಿನ್ನ ಬಳಿಗೆ ತೆಗೆದುಕೊಂಡು ಬರುವೆನು. ನೀನು ಹುಡುಕುವವನು ಸಿಕ್ಕಿದರೆ, ಜನರೆಲ್ಲರು ಹಿಂದಿರುಗಿದ ಹಾಗೆ ಆಗುವುದು. ಜನರೆಲ್ಲರು ಸಮಾಧಾನವಾಗಿರುವರು,” ಎಂದನು.</verse>
				<verse number="4">ಈ ಮಾತು ಅಬ್ಷಾಲೋಮನ ದೃಷ್ಟಿಗೂ, ಇಸ್ರಾಯೇಲಿನ ಸಮಸ್ತ ಹಿರಿಯರ ದೃಷ್ಟಿಗೂ ಒಳ್ಳೆಯದಾಗಿ ತೋರಿತು.</verse>
				<verse number="5">ಆದರೆ ಅಬ್ಷಾಲೋಮನು, “ಅರ್ಕಿಯನಾದ ಹೂಷೈಯನ್ನು ನಾವು ಕೇಳುವ ಹಾಗೆ ಅವನನ್ನು ಕರೆಯಿರಿ,” ಎಂದನು.</verse>
				<verse number="6">ಹೂಷೈ ಅಬ್ಷಾಲೋಮನ ಬಳಿಗೆ ಬಂದಾಗ, ಅಬ್ಷಾಲೋಮನು ಅವನಿಗೆ, “ಅಹೀತೋಫೆಲನು ಈ ಪ್ರಕಾರ ಹೇಳಿದ್ದಾನೆ. ಅವನ ಮಾತಿನ ಪ್ರಕಾರ ಮಾಡೋಣವೋ? ಬೇಡವಾದರೆ ನೀನು ಮಾತನಾಡು,” ಎಂದನು.</verse>
				<verse number="7">ಆಗ ಹೂಷೈ ಅಬ್ಷಾಲೋಮನಿಗೆ, “ಅಹೀತೋಫೆಲನು ಹೇಳಿದ ಆಲೋಚನೆಯು ಈ ವೇಳೆಗೆ ಒಳ್ಳೆಯದಲ್ಲ,” ಎಂದನು.</verse>
				<verse number="8">ಹೂಷೈ, “ನಿನ್ನ ತಂದೆಯೂ, ಅವನ ಮನುಷ್ಯರೂ ಪರಾಕ್ರಮಶಾಲಿಗಳು. ಅವರು ಅಡವಿಯಲ್ಲಿ ಮರಿಗಳನ್ನು ಕಳೆದುಕೊಂಡ ಕರಡಿಯ ಹಾಗೆಯೇ ಕೋಪವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು. ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವುದಿಲ್ಲ.</verse>
				<verse number="9">ಅವನು ಈಗ ಒಂದು ಗವಿಯಲ್ಲಾದರೂ, ಒಂದು ಸ್ಥಳದಲ್ಲಾದರೂ ಅಡಗಿಕೊಂಡಿದ್ದಾನೆ. ಮೊದಲೇ ಇವರಲ್ಲಿ ಕೆಲವರು ಸತ್ತರೆ, ಅದನ್ನು ಕೇಳುವವರು ಅಬ್ಷಾಲೋಮನನ್ನು ಹಿಂಬಾಲಿಸುವ ಜನರಲ್ಲಿ ಸಂಹಾರವಾಯಿತೆಂದು ಹೇಳುವರು.</verse>
				<verse number="10">ಆಗ ಸಿಂಹ ಹೃದಯರಾದ ಪರಾಕ್ರಮಶಾಲಿಯ ಹೃದಯವು ಸಹ ಸಂಪೂರ್ಣ ಕರಗುವುದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ, ಅವನ ಸಂಗಡ ಇರುವವರು ಪರಾಕ್ರಮಶಾಲಿಗಳೆಂದೂ ಇಸ್ರಾಯೇಲರೆಲ್ಲರು ಬಲ್ಲರು.</verse>
				<verse number="11">“ನಾನು ಹೇಳುವ ಆಲೋಚನೆ ಏನೆಂದರೆ, ದಾನಿನಿಂದ ಬೇರ್ಷೆಬದವರೆಗೂ ವಾಸವಾಗಿರುವ ಇಸ್ರಾಯೇಲರೊಳಗಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ನಿನ್ನ ಬಳಿಯಲ್ಲಿ ಕೂಡಿಸಿ, ನೀನೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.</verse>
				<verse number="12">ಆಗ ನಾವು ಅವನನ್ನು ಕಂಡುಕೊಳ್ಳುವ ಸ್ಥಳದಲ್ಲಿ ಅವನ ಮೇಲೆ ಬಂದು, ಭೂಮಿಯ ಮೇಲೆ ಮಂಜು ಬೀಳುವ ಹಾಗೆ ಅವನ ಮೇಲೆ ಬೀಳುವೆವು. ಅವನೂ, ಅವನ ಸಂಗಡ ಇರುವ ಸಮಸ್ತ ಜನರಲ್ಲಿ ಒಬ್ಬನಾದರೂ ಉಳಿಯುವುದಿಲ್ಲ.</verse>
				<verse number="13">ಅವನು ಒಂದು ಪಟ್ಟಣದಲ್ಲಿ ಹೊಕ್ಕಿರುವುದಾದರೆ, ಇಸ್ರಾಯೇಲರೆಲ್ಲರೂ ಆ ಪಟ್ಟಣಕ್ಕೆ ಹಗ್ಗಗಳನ್ನು ತಂದುಹಾಕಿದ ತರುವಾಯ, ನಾವು ಒಂದು ಹರಳಾದರೂ ಅಲ್ಲಿ ಉಳಿಯದಂತೆ ಆ ಊರನ್ನು ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿಬಿಡೋಣ,” ಎಂದನು.</verse>
				<verse number="14">ಆಗ ಅಬ್ಷಾಲೋಮನೂ, ಇಸ್ರಾಯೇಲಿನ ಸಮಸ್ತ ಮನುಷ್ಯರೂ, “ಅಹೀತೋಫೆಲನ ಆಲೋಚನೆಗಿಂತ ಅರ್ಕಿಯನಾದ ಹೂಷೈಯ ಆಲೋಚನೆ ಒಳ್ಳೆಯದು,” ಎಂದರು. ಏಕೆಂದರೆ ತಾನು ಅಬ್ಷಾಲೋಮನ ಮೇಲೆ ಕೇಡನ್ನು ಬರಮಾಡುವ ಹಾಗೆ ಅಹೀತೋಫೆಲನ ಒಳ್ಳೆಯ ಆಲೋಚನೆಯನ್ನು ವ್ಯರ್ಥಮಾಡುವುದಕ್ಕೆ ಯೆಹೋವ ದೇವರು ಹಾಗೆ ನೇಮಿಸಿದ್ದರು.</verse>
				<verse number="15">ಹೂಷೈಯು ಯಾಜಕರಾದ ಚಾದೋಕನಿಗೂ, ಅಬಿಯಾತರನಿಗೂ, “ಅಹೀತೋಫೆಲನು ಅಬ್ಷಾಲೋಮನಿಗೂ, ಇಸ್ರಾಯೇಲಿನ ಹಿರಿಯರಿಗೂ ಇಂಥಿಂಥ ಆಲೋಚನೆ ಹೇಳಿದನು.</verse>
				<verse number="16">ಆದ್ದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀವು ಈ ರಾತ್ರಿ ಅಡವಿಯಲ್ಲಿ ನದಿ ದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡಿ; ಶೀಘ್ರವಾಗಿ ನದಿದಾಟಿ ಮುಂದೆ ಹೋಗಬೇಡಿ; ಇಲ್ಲವಾದರೆ ನೀವೂ, ನಿಮ್ಮ ಜನರೂ ನಾಶವಾಗುವಿರಿ,’ ಎಂದು ಹೇಳಿ ಕಳುಹಿಸಿರಿ,” ಎಂದನು.</verse>
				<verse number="17">ಯೋನಾತಾನನೂ, ಅಹೀಮಾಚನೂ ಏನ್ ರೋಗೆಲ್ ಎಂಬಲ್ಲಿ ಇದ್ದರು. ಒಬ್ಬ ಸೇವಕಿ ಹೋಗಿ ಅವರಿಗೆ ತಿಳಿಸಬೇಕಾಗಿತ್ತು. ಅನಂತರ ಅವರು ಹೋಗಿ ಅರಸನಾದ ದಾವೀದನಿಗೆ ಹೇಳಬೇಕಾಗಿತ್ತು. ಏಕೆಂದರೆ ಪಟ್ಟಣದಲ್ಲಿ ಪ್ರವೇಶಿಸುವುದನ್ನು ಬೇರೆಯವರು ನೋಡುವ ಗಂಡಾಂತರಕ್ಕೆ ಒಳಗಾಗಲು ಅಪೇಕ್ಷಿಸಿರಲಿಲ್ಲ.</verse>
				<verse number="18">ಆದರೆ ಒಬ್ಬ ಹುಡುಗನು ಅವರನ್ನು ಕಂಡು ಅಬ್ಷಾಲೋಮನಿಗೆ ತಿಳಿಸಿದನು. ಆದ್ದರಿಂದ ಅವರಿಬ್ಬರು ಶೀಘ್ರವಾಗಿ ಹೋಗಿ, ಬಹುರೀಮಿನಲ್ಲಿರುವ ಒಬ್ಬ ಮನುಷ್ಯನ ಮನೆಯಲ್ಲಿ ಪ್ರವೇಶಿಸಿ, ಅವನ ಅಂಗಳದಲ್ಲಿರುವ ಬಾವಿಯಲ್ಲಿ ಇಳಿದರು.</verse>
				<verse number="19">ಆಗ ಆ ಮನೆಯವಳು ಬಾವಿಯ ಮೇಲೆ ಒಂದು ವಸ್ತ್ರವನ್ನು ಹಾಸಿ ನುಚ್ಚನ್ನು ಹರವಿದಳು. ಈ ಕಾರ್ಯ ಯಾರಿಗೂ ತಿಳಿಯದೆ ಹೋಯಿತು.</verse>
				<verse number="20">ಅಬ್ಷಾಲೋಮನ ಸೇವಕರು ಮನೆಯೊಳಗೆ ಬಂದು ಆ ಸ್ತ್ರೀಯನ್ನು, “ಅಹೀಮಾಚನೂ, ಯೋನಾತಾನನೂ ಎಲ್ಲಿ,” ಎಂದು ಕೇಳಿದರು. ಅವಳು ಅವರಿಗೆ, “ಹಳ್ಳವನ್ನು ದಾಟಿಹೋದರು,” ಎಂದಳು. ಅವರು ಹುಡುಕಿ ಕಾಣದೆ ಹೋಗಿ ಯೆರೂಸಲೇಮಿಗೆ ಹಿಂದಿರುಗಿದರು.</verse>
				<verse number="21">ಇವರು ಹೋದ ತರುವಾಯ, ಅವರು ಬಾವಿಯೊಳಗಿಂದ ಏರಿಹೋಗಿ, ಅರಸನಾದ ದಾವೀದನಿಗೆ, “ನೀನು ಶೀಘ್ರವಾಗಿ ಎದ್ದು ನದಿಯನ್ನು ದಾಟಿ ಹೋಗು; ಏಕೆಂದರೆ ಈ ಪ್ರಕಾರ ಅಹೀತೋಫೆಲನು ನಿನಗೆ ವಿರೋಧವಾಗಿ ಆಲೋಚನೆ ಹೇಳಿದ್ದಾನೆ,” ಎಂದರು.</verse>
				<verse number="22">ಆಗ ದಾವೀದನೂ, ಅವನ ಸಂಗಡ ಇದ್ದ ಸಮಸ್ತ ಜನರೂ ಎದ್ದು ಯೊರ್ದನನ್ನು ದಾಟಿದರು. ಉದಯವಾದಾಗ ದಾಟಬೇಕಾದವರು ಒಬ್ಬರಾದರೂ ಉಳಿದಿರಲಿಲ್ಲ.</verse>
				<verse number="23">ಆದರೆ ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ, ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ, ತನ್ನ ಪಟ್ಟಣದಲ್ಲಿರುವ ತನ್ನ ಮನೆಗೆ ಹೋದನು. ಅವನು ಮನೆಯನ್ನು ಕ್ರಮಪಡಿಸಿ, ಉರುಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.</verse>
				<verse number="24">ದಾವೀದನು ಮಹನಯಿಮಿಗೆ ಬಂದನು. ಇದಲ್ಲದೆ ಅಬ್ಷಾಲೋಮನೂ, ಅವನ ಸಂಗಡ ಇಸ್ರಾಯೇಲ್ ಮನುಷ್ಯರೂ ಯೊರ್ದನನ್ನು ದಾಟಿದರು.</verse>
				<verse number="25">ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯಾಗಿ ಇಟ್ಟಿದ್ದನು. ಈ ಅಮಾಸನು ಇಸ್ರಾಯೇಲನಾದ ಇತ್ರನ ಮಗನು. ಈ ಇತ್ರನು ನಾಹಾಷನ ಮಗಳೂ, ಯೋವಾಬನ ತಾಯಿಯೂ, ಚೆರೂಯಳ ಸಹೋದರಿಯೂ ಆದ ಅಬೀಗೈಲಳನ್ನು ಮದುವೆಯಾಗಿದ್ದನು.</verse>
				<verse number="26">ಇಸ್ರಾಯೇಲರೂ, ಅಬ್ಷಾಲೋಮನೂ ಗಿಲ್ಯಾದ್ ದೇಶದಲ್ಲಿ ದಂಡಿಳಿದರು.</verse>
				<verse number="27">ದಾವೀದನು ಮಹನಯಿಮಿಗೆ ಬಂದಾಗ, ಅಮ್ಮೋನಿಯರ ರಬ್ಬಾ ಪಟ್ಟಣದ ನಾಹಾಷನ ಮಗ ಶೋಬಿಯೂ, ಲೋದೆಬಾರು ಊರಿನವನಾಗಿರುವ ಅಮ್ಮಿಯೇಲನ ಮಗ ಮಾಕೀರನೂ, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈಯೂ</verse>
				<verse number="28">ಹಾಸಿಗೆಗಳನ್ನು, ಬಟ್ಟಲುಗಳನ್ನು, ಮಡಕೆ, ಗೋಧಿ, ಜವೆಗೋಧಿ, ಹಿಟ್ಟು, ಹುರಿದ ಕಾಳು ಅವರೆ, ಅಲಸಂದಿ,</verse>
				<verse number="29">ಹುರಿದ ಕಡಲೆ, ಜೇನುತುಪ್ಪ, ಬೆಣ್ಣೆ, ಕುರಿ, ಹಸುವಿನ ಗಿಣ್ಣು ಇವುಗಳನ್ನು ದಾವೀದನಿಗೂ, ಅವನ ಸಂಗಡ ಇದ್ದ ಜನರಿಗೂ ತಿನ್ನುವುದಕ್ಕೆ ತಂದರು. ಏಕೆಂದರೆ, “ಮರುಭೂಮಿಯಲ್ಲಿ ಜನರು ಹಸಿದು ದಣಿದು ದಾಹಗೊಂಡಿರುವರು,” ಎಂದುಕೊಂಡರು.</verse>
			</chapter>
			<chapter number="18">
				<verse number="1">ದಾವೀದನು ತನ್ನ ಸಂಗಡದಲ್ಲಿದ್ದ ಜನರನ್ನು ಲೆಕ್ಕ ಮಾಡಿ, ಅವರ ಮೇಲೆ ಸಾವಿರ ಜನರಿಗೂ, ನೂರು ಜನರಿಗೂ ಅಧಿಪತಿಗಳನ್ನು ನೇಮಿಸಿದನು.</verse>
				<verse number="2">ದಾವೀದನು ಜನರಲ್ಲಿ ಮೂರನೆಯ ಪಾಲನ್ನು ಯೋವಾಬನಿಗೂ, ಎರಡನೆಯ ಪಾಲನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆಗಿರುವ ಅಬೀಷೈಗೂ, ಮೂರನೆಯ ಪಾಲನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿದನು. ತರುವಾಯ ಅರಸನು ಸೈನಿಕರಿಗೆ, “ನಾನೂ ನಿಮ್ಮ ಸಂಗಡ ಹೊರಟು ಬರುತ್ತೇನೆ,” ಎಂದನು.</verse>
				<verse number="3">ಆದರೆ ಸೈನಿಕರು ಅವನಿಗೆ, “ನೀನು ನಮ್ಮ ಸಂಗಡ ಬರಬೇಡ. ಏಕೆಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವುದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸಮನಾಗಿದ್ದೀ. ಈಗ ನೀನು ಊರಿನಲ್ಲಿದ್ದು, ನಮಗೆ ಸಹಾಯವಾಗಿರುವುದೇ ಉತ್ತಮ,” ಎಂದರು.</verse>
				<verse number="4">ಆಗ ಅರಸನು ಅವರಿಗೆ, “ನಿಮಗೆ ಸರಿಕಾಣಿಸುವುದನ್ನು ಮಾಡುತ್ತೇನೆ,” ಎಂದನು. ಅರಸನು ಬಾಗಿಲ ಬಳಿಯಲ್ಲಿ ನಿಂತನು. ಸೈನಿಕರೆಲ್ಲಾ ನೂರು ನೂರಾಗಿಯೂ, ಸಾವಿರ ಸಾವಿರಗಳಾಗಿಯೂ ಹೊರಟರು.</verse>
				<verse number="5">ಅರಸನು ಯೋವಾಬನಿಗೂ, ಅಬೀಷೈಯಿಗೂ, ಇತ್ತೈಗೂ ಆಜ್ಞಾಪಿಸಿ, “ನನಗೋಸ್ಕರ ಯುವಕನಾದ ಅಬ್ಷಾಲೋಮನೊಂದಿಗೆ ಮೃದುವಾಗಿ ವರ್ತಿಸಿರಿ,” ಎಂದನು. ಹೀಗೆ ಅರಸನು ಅಬ್ಷಾಲೋಮನನ್ನು ಕುರಿತು ಅಧಿಪತಿಗಳೆಲ್ಲರಿಗೂ ಕೊಟ್ಟ ಆಜ್ಞೆಯನ್ನು ಸೈನಿಕರೆಲ್ಲರೂ ಕೇಳಿದರು.</verse>
				<verse number="6">ಅನಂತರ ಸೈನಿಕರು ಇಸ್ರಾಯೇಲಿಗೆ ವಿರೋಧವಾಗಿ ಹೊರಟರು. ಯುದ್ಧವು ಎಫ್ರಾಯೀಮ್ ಅಡವಿಯಲ್ಲಿತ್ತು.</verse>
				<verse number="7">ಅಲ್ಲಿ ಇಸ್ರಾಯೇಲರು ದಾವೀದನ ಸೇವಕರ ಮುಂದೆ ಸಂಹಾರವಾದರು.</verse>
				<verse number="8">ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು. ಇಪ್ಪತ್ತು ಸಾವಿರ ಸೈನಿಕರು ಸತ್ತರು. ಅಲ್ಲಿನ ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಸೈನಿಕರಲ್ಲಿ ಖಡ್ಗದಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.</verse>
				<verse number="9">ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಅಬ್ಷಾಲೋಮನು ಹೇಸರಗತ್ತೆಯ ಮೇಲೆ ಏರಿದ್ದನು. ಆ ಹೇಸರಗತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ, ಅವನ ತಲೆಯು ಆ ಮರದ ಕೊಂಬೆಯಲ್ಲಿ ಸಿಕ್ಕಿಕೊಂಡಿತು. ಆದ್ದರಿಂದ ಅವನು ಹತ್ತಿದ್ದ ಹೇಸರಗತ್ತೆಯು ಹೊರಟುಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು.</verse>
				<verse number="10">ಅದನ್ನು ಒಬ್ಬನು ಕಂಡು ಯೋವಾಬನಿಗೆ, “ಅಬ್ಷಾಲೋಮನು ಒಂದು ಏಲಾ ಮರದಲ್ಲಿ ತೂಗಾಡುವುದನ್ನು ಕಂಡೆನು,” ಎಂದನು.</verse>
				<verse number="11">ಅದಕ್ಕೆ ಯೋವಾಬನು ತನಗೆ ಅದನ್ನು ತಿಳಿಸಿದವನಿಗೆ, “ನೀನು ಕಂಡು ಅವನನ್ನು ಏಕೆ ಕಡಿದು ನೆಲಕ್ಕೆ ಉರುಳಿಸಲಿಲ್ಲ? ನಾನು ನಿನಗೆ ಹತ್ತು ಬೆಳ್ಳಿ ನಾಣ್ಯಗಳನ್ನು, ಒಂದು ಬೆಳ್ಳಿ ನಡುಕಟ್ಟನ್ನು ಕೊಡುತ್ತಿದ್ದೆನು,” ಎಂದನು.</verse>
				<verse number="12">ಆದರೆ ಆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ, ನಾನು ಅರಸನ ಮಗನ ಮೇಲೆ ನನ್ನ ಕೈಚಾಚುವುದಿಲ್ಲ. ಏಕೆಂದರೆ, ‘ಅಬ್ಷಾಲೋಮನೆಂಬ ಯುವಕನೊಡನೆ ಸೌಮ್ಯದಿಂದ ನಡೆದು ಕಾಪಾಡಿರಿ,’ ಎಂದು ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಯನಿಗೂ, ಇತ್ತೈಗೂ ಸ್ಪಷ್ಟವಾಗಿ ಆಜ್ಞಾಪಿಸಿದ್ದನು.</verse>
				<verse number="13">ಹಾಗಿರುವಾಗ ನಾನೇ ನನ್ನ ಪ್ರಾಣಕ್ಕೆ ಏಕೆ ಮೋಸಮಾಡಿಕೊಳ್ಳಬೇಕು. ಏಕೆಂದರೆ ಅರಸನಿಗೆ ಯಾವ ಕಾರ್ಯವೂ ಮರೆಯಾಗಿರುವುದಿಲ್ಲ. ನೀನೇ ನನಗೆ ವಿರೋಧವಾಗಿ ನಿಲ್ಲುವಿ,” ಎಂದನು.</verse>
				<verse number="14">ಆಗ ಯೋವಾಬನು, “ನಾನು ಹೀಗೆ ನಿನ್ನ ಮುಂದೆ ಆಲಸ್ಯ ಮಾಡೆನು,” ಎಂದು ಹೇಳಿ, ಮೂರು ಈಟಿಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು, ಅಬ್ಷಾಲೋಮನು ಇನ್ನೂ ಏಲಾ ಮರದ ಮಧ್ಯದಲ್ಲಿ ಜೀವದಿಂದಿರುವಾಗ, ಅವುಗಳನ್ನು ಅವನ ಹೃದಯದಲ್ಲಿ ತಿವಿದನು.</verse>
				<verse number="15">ಆಗ ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯುವಕರು ಸುತ್ತಿಕೊಂಡು, ಅಬ್ಷಾಲೋಮನನ್ನು ಕೊಂದುಹಾಕಿದರು.</verse>
				<verse number="16">ಆಗ ಯೋವಾಬನು ತುತೂರಿಯನ್ನು ಊದಿದ್ದರಿಂದ, ಸೈನಿಕರು ಇಸ್ರಾಯೇಲರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು. ಏಕೆಂದರೆ ಯೋವಾಬನು ಜನರನ್ನು ತಡೆದನು.</verse>
				<verse number="17">ಅವರು ಅಬ್ಷಾಲೋಮನನ್ನು ತೆಗೆದುಕೊಂಡು, ಅಡವಿಯಲ್ಲಿರುವ ಒಂದು ದೊಡ್ಡ ಗುಂಡಿಯಲ್ಲಿ ಹಾಕಿ, ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆದರೆ ಇಸ್ರಾಯೇಲರೆಲ್ಲರೂ ತಮ್ಮ ಗುಡಾರಗಳಿಗೆ ಓಡಿಹೋದರು.</verse>
				<verse number="18">ಅಬ್ಷಾಲೋಮನು ಜೀವದಿಂದಿರುವಾಗ, “ನನ್ನ ಹೆಸರನ್ನು ಜ್ಞಾಪಕಾರ್ಥವಾಗಿ ಉಳಿಸಲು ನನಗೆ ಮಗನಿಲ್ಲ,” ಎಂದು ಹೇಳಿ, ಅವನು ತಗ್ಗಿನಲ್ಲಿರುವ ಒಂದು ಕಲ್ಲಿನ ಸ್ತಂಭವನ್ನು ತರಿಸಿ, ಅದನ್ನು ಅರಸನ ಕಣಿವೆಯಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಆ ಸ್ತಂಭಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದು ಈ ದಿನದವರೆಗೂ ಅಬ್ಷಾಲೋಮನ ಸ್ಮಾರಕಸ್ತಂಭ ಎಂದು ಕರೆಯಲಾಗುತ್ತದೆ.</verse>
				<verse number="19">ಆಗ ಚಾದೋಕನ ಮಗ ಅಹೀಮಾಚನು, “ಯೆಹೋವ ದೇವರು ರಾಜನ ಶತ್ರುಗಳ ಮೇಲೆ ಹೇಗೆ ನ್ಯಾಯ ತೀರಿಸಿದ್ದಾರೆಂಬ ವರ್ತಮಾನವನ್ನು ಅರಸನಿಗೆ ತಿಳಿಸುವ ಹಾಗೆ, ನಾನು ಓಡಿ ಹೋಗುವೆನು,” ಎಂದನು.</verse>
				<verse number="20">ಆದರೆ ಯೋವಾಬನು ಅವನಿಗೆ, “ನೀನು ಈ ಹೊತ್ತು ವರ್ತಮಾನ ತೆಗೆದುಕೊಂಡು ಹೋಗಬೇಡ. ಮತ್ತೊಂದು ದಿವಸ ವರ್ತಮಾನ ತೆಗೆದುಕೊಂಡು ಹೋಗಬಹುದು. ಏಕೆಂದರೆ ಅರಸನ ಮಗನು ಸತ್ತದ್ದರಿಂದ ಈ ಹೊತ್ತು ನೀನು ವರ್ತಮಾನ ತೆಗೆದುಕೊಂಡು ಹೋಗಬೇಡ,” ಎಂದನು.</verse>
				<verse number="21">ಯೋವಾಬನು ಕೂಷ್ಯ ದೇಶವಾಸಿಯಾದ ಒಬ್ಬನಿಗೆ, “ನೀನು ಹೋಗಿ ಕಂಡದ್ದನ್ನು ಅರಸನಿಗೆ ತಿಳಿಸು,” ಎಂದನು. ಕೂಷ್ಯ ದೇಶವಾಸಿ ಯೋವಾಬನಿಗೆ ಅಡ್ಡಬಿದ್ದು ಓಡಿಹೋದನು.</verse>
				<verse number="22">ಆಗ ಚಾದೋಕನ ಮಗ ಅಹೀಮಾಚನು ಯೋವಾಬನಿಗೆ, ಏನೇ ಆಗಲಿ, “ನಾನು ಕೂಷ್ಯ ದೇಶವಾಸಿ ಹಿಂದೆ ಓಡಿಹೋಗುವ ಹಾಗೆ ಅಪ್ಪಣೆಕೊಡಬೇಕು,” ಎಂದನು. ಅದಕ್ಕೆ ಯೋವಾಬನು, “ನನ್ನ ಮಗನೇ, ನೀನು ಏಕೆ ಹೋಗಲು ಬಯಸುತ್ತಿರುವೆ? ನಿನಗೆ ಪ್ರಶಸ್ತಿಯನ್ನು ತರುವ ಯಾವುದೇ ಸುದ್ದಿ ನಿನ್ನ ಬಳಿ ಇಲ್ಲ,” ಎಂದನು.</verse>
				<verse number="23">ಅವನು, “ಏನೇ ಆಗಲಿ, ನಾನು ಓಡಿ ಹೋಗುತ್ತೇನೆ,” ಎಂದನು. ಯೋವಾಬನು, “ಓಡು,” ಎಂದನು. ಆಗ ಅಹೀಮಾಚನು ಬಯಲು ಮಾರ್ಗವಾಗಿ ಓಡಿ ಕೂಷ್ಯನನ್ನು ದಾಟಿಹೋದನು.</verse>
				<verse number="24">ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತಿದ್ದನು. ಕಾವಲುಗಾರನು ಗೋಪುರದ ಮಾಳಿಗೆಯ ಮೇಲೆ ಏರಿ, ಕಣ್ಣುಗಳನ್ನೆತ್ತಿ ನೋಡಲಾಗಿ, ಒಬ್ಬ ಮನುಷ್ಯನು ಒಂಟಿಯಾಗಿ ಓಡಿಬರುವುದನ್ನು ಕಂಡನು.</verse>
				<verse number="25">ಆಗ ಕಾವಲುಗಾರನು ಕೂಗಿ ಅರಸನಿಗೆ ತಿಳಿಸಿದನು. ಅರಸನು, “ಅವನು ಒಬ್ಬನಾಗಿ ಬಂದರೆ, ಅವನ ಬಳಿ ಒಳ್ಳೆಯ ಸಮಾಚಾರ ಇರುವುದು,” ಎಂದನು. ಅವನು ಬಂದು ಸಮೀಪಿಸಿದನು.</verse>
				<verse number="26">ಕಾವಲುಗಾರನು ಬೇರೊಬ್ಬನು ಓಡಿಬರುವುದನ್ನು ಕಂಡು, ಬಾಗಿಲು ಕಾಯುವವನನ್ನು ಕರೆದು, “ಇಗೋ, ಮತ್ತೊಬ್ಬನು ಒಂಟಿಯಾಗಿ ಓಡಿ ಬರುತ್ತಿದ್ದಾನೆ,” ಎಂದನು. ಅದಕ್ಕೆ ಅರಸನು, “ಅವನೂ ಸಹ ಒಳ್ಳೆಯ ಸಮಾಚಾರ ತೆಗೆದುಕೊಂಡು ಬರುತ್ತಾನೆ,” ಎಂದನು.</verse>
				<verse number="27">ಕಾವಲುಗಾರನು, “ಮೊದಲನೆಯವನ ಓಟವು ಚಾದೋಕನ ಮಗ ಅಹೀಮಾಚನ ಓಟದ ಹಾಗೆ ಇರುವುದೆಂದು ನನಗೆ ಕಾಣುತ್ತದೆ,” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು, ಒಳ್ಳೆಯ ಸಮಾಚಾರ ತರುತ್ತಾನೆ,” ಎಂದನು.</verse>
				<verse number="28">ಆಗ ಅಹೀಮಾಚನು ಕೂಗಿ ಅರಸನಿಗೆ, “ಎಲ್ಲವೂ ಕ್ಷೇಮ,” ಎಂದು ಹೇಳಿ ಅರಸನ ಮುಂದೆ ಮೋರೆ ಕೆಳಗಾಗಿ, ನೆಲಕ್ಕೆ ಅಡ್ಡಬಿದ್ದು, “ಅರಸನಾದ ನನ್ನ ಒಡೆಯನಿಗೆ ವಿರೋಧವಾಗಿ ತಮ್ಮ ಕೈಗಳನ್ನೆತ್ತಿದ ಮನುಷ್ಯರನ್ನು ಒಪ್ಪಿಸಿಕೊಟ್ಟ ನಿಮ್ಮ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ,” ಎಂದನು.</verse>
				<verse number="29">ಅರಸನು, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದು ಕೇಳಿದನು. ಅದಕ್ಕೆ ಅಹೀಮಾಚನು ಉತ್ತರವಾಗಿ, “ಯೋವಾಬನು ಅರಸನ ಸೇವಕನನ್ನೂ, ನಿನ್ನ ಸೇವಕನಾದ ನನ್ನನ್ನೂ ಕಳುಹಿಸಿದಾಗ ದೊಡ್ಡ ಗೊಂದಲವನ್ನು ಕಂಡೆನು. ಆದರೆ ಅದು ಏನೋ ನಾನರಿಯೆ,” ಎಂದನು.</verse>
				<verse number="30">ಅರಸನು, “ನೀನು ಇತ್ತಲಾಗಿ ಬಂದು ನಿಲ್ಲು,” ಎಂದನು. ಅವನು ಅತ್ತಲಾಗಿ ಹೋಗಿ ನಿಂತನು. ಆಗ ಕೂಷ್ಯನು ಬಂದನು.</verse>
				<verse number="31">ಕೂಷ್ಯನು, “ಅರಸನಾದ ನನ್ನ ಒಡೆಯನಿಗೆ ಶುಭವರ್ತಮಾನ ಉಂಟು, ಏನೆಂದರೆ ಯೆಹೋವ ದೇವರು ಈ ಹೊತ್ತು ನಿನಗೆ ವಿರೋಧವಾಗಿ ಎದ್ದು, ಸಮಸ್ತರಿಗೂ ಮುಯ್ಯಿಗೆ ಮುಯ್ಯಿ ತೀರಿಸಿದ್ದಾರೆ,” ಎಂದನು.</verse>
				<verse number="32">ಅರಸನು ಕೂಷ್ಯನಿಗೆ, “ಯುವಕನಾದ ಅಬ್ಷಾಲೋಮನಿಗೆ ಕ್ಷೇಮವೋ?” ಎಂದನು. ಕೂಷ್ಯನು ಉತ್ತರವಾಗಿ, “ಅರಸನಾದ ನನ್ನ ಒಡೆಯನ ಶತ್ರುಗಳು ಕೇಡು ಮಾಡುವಂತೆ ನಿನಗೆ ವಿರೋಧವಾಗಿ ಏಳುವ ಸಮಸ್ತರಿಗೂ, ಆ ಯುವಕನಿಗಾದ ಹಾಗೆಯೇ ಆಗಲಿ,” ಎಂದನು.</verse>
				<verse number="33">ಆಗ ಅರಸನು ನಡುಗುತ್ತಾ ಊರು ಬಾಗಿಲ ಮೇಲಿರುವ ಕೊಠಡಿಗೆ ಏರಿಹೋದನು. ಹೋಗುವಾಗ, “ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ,” ಎಂದು ಹೇಳಿ ಅತ್ತನು.</verse>
			</chapter>
			<chapter number="19">
				<verse number="1">“ಅರಸನು ಅಬ್ಷಾಲೋಮನಿಗೋಸ್ಕರ ಅತ್ತು ದುಃಖ ಪಡುತ್ತಾ ಇದ್ದಾನೆ,” ಎಂದು ಯೋವಾಬನಿಗೆ ತಿಳಿಸಲಾಯಿತು.</verse>
				<verse number="2">“ಅರಸನು ತನ್ನ ಮಗನಿಗೋಸ್ಕರ ವ್ಯಥೆಪಡುತ್ತಿದ್ದಾನೆ,” ಎಂದು ಎಲ್ಲ ಜನರಿಗೂ ಗೊತ್ತಾಗಿದ್ದರಿಂದ ಆ ವಿಜಯದ ದಿನವು ಸಮಸ್ತ ಜನರಿಗೆ ಗೋಳಾಟವಾಗಿ ಮಾರ್ಪಟ್ಟಿತು.</verse>
				<verse number="3">ಆದ್ದರಿಂದ ಜನರು ಯುದ್ಧದಲ್ಲಿ ಓಡಿಹೋಗಿ ಅವಮಾನ ಪಟ್ಟು ಬರುವ ಕಳ್ಳರ ಹಾಗೆ ಪಟ್ಟಣದೊಳಗೆ ಬಂದರು.</verse>
				<verse number="4">ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು, ಮಹಾಶಬ್ದವಾಗಿ, “ನನ್ನ ಮಗ ಅಬ್ಷಾಲೋಮನೇ, ಅಬ್ಷಾಲೋಮನೇ ನನ್ನ ಮಗನೇ, ನನ್ನ ಮಗನೇ,” ಎಂದು ಕೂಗುತ್ತಿದ್ದನು.</verse>
				<verse number="5">ಆಗ ಯೋವಾಬನು ಮನೆಯೊಳಗೆ ಅರಸನ ಬಳಿಗೆ ಬಂದು, ಅವನಿಗೆ, “ನಿನ್ನ ಪ್ರಾಣವನ್ನೂ, ನಿನ್ನ ಪುತ್ರಪುತ್ರಿಯರ ಪ್ರಾಣಗಳನ್ನೂ, ನಿನ್ನ ಹೆಂಡತಿಯರ ಮತ್ತು ಉಪಪತ್ನಿಯರ ಪ್ರಾಣಗಳನ್ನೂ ರಕ್ಷಿಸಿದ ನಿನ್ನ ಸೇವಕರನ್ನು ಈ ಹೊತ್ತು ನಾಚಿಕೆಪಡಿಸಿದ್ದೀ.</verse>
				<verse number="6">ನೀನು ನಿನ್ನ ಹಗೆಯವರನ್ನು ಪ್ರೀತಿಮಾಡಿ, ನಿನ್ನನ್ನು ಪ್ರೀತಿಸುವವರನ್ನು ಹಗೆ ಮಾಡಿದ್ದರಿಂದ ಸೇನಾಧಿಪತಿಗಳನ್ನೂ, ಸೈನಿಕರನ್ನೂ ನಿನಗೆ ಏನೂ ಅಲ್ಲವೆಂದು ಈಗ ತಿಳಿಯಮಾಡಿದಿ. ಈ ಹೊತ್ತು ನಾವೆಲ್ಲರೂ ಸತ್ತು ಅಬ್ಷಾಲೋಮನು ಬದುಕಿದ್ದರೆ, ನಿನಗೆ ಸಂತೋಷವಾಗುತ್ತಿತ್ತು ಎಂದು ನನಗೆ ಅನಿಸುತ್ತದೆ.</verse>
				<verse number="7">ಈಗ ನೀನು ಎದ್ದು ಹೊರಟುಬಂದು, ನಿನ್ನ ಸೈನಿಕರ ಸಂಗಡ ಸಮಾಧಾನವಾಗಿ ಮಾತನಾಡು. ನೀನು ಹೊರಗೆ ಬಾರದೆ ಇದ್ದರೆ, ಈ ರಾತ್ರಿಯಲ್ಲಿ ಒಬ್ಬರಾದರೂ ನಿನ್ನ ಸಂಗಡ ಇರುವುದಿಲ್ಲವೆಂದು ಯೆಹೋವ ದೇವರ ಮೇಲೆ ಆಣೆ ಇಟ್ಟು ಹೇಳುತ್ತೇನೆ. ಆಗ ನಿನ್ನ ಯೌವನಕಾಲದಿಂದ ಈ ದಿನದವರೆಗೂ ನಿನಗೆ ಬಂದ ಸಮಸ್ತ ಕೇಡಿಗಿಂತ ಅದು ಅಧಿಕ ಕೇಡಾಗಿರುವುದು,” ಎಂದನು.</verse>
				<verse number="8">ಆಗ ಅರಸನು ಎದ್ದು ಹೋಗಿ ಬಾಗಿಲಲ್ಲಿ ಕುಳಿತನು. “ಅರಸನು ಬಾಗಿಲಲ್ಲಿ ಕುಳಿತಿದ್ದಾನೆ,” ಎಂದು ಸಮಸ್ತ ಸೈನಿಕರಿಗೆ ತಿಳಿದಿದ್ದರಿಂದ, ಸೈನಿಕರೆಲ್ಲರೂ ಅರಸನ ಎದುರಿಗೆ ಬಂದರು. ಆದರೆ ಇಸ್ರಾಯೇಲರು ಮಧ್ಯದಲ್ಲಿ ತಮ್ಮ ತಮ್ಮ ಮನೆಗಳಿಗೆ ಹೋದರು.</verse>
				<verse number="9">ಇಸ್ರಾಯೇಲಿನ ಎಲ್ಲಾ ಕುಲಗಳಲ್ಲಿ ಸಮಸ್ತ ಜನರು ತಮ್ಮೊಳಗೆ ಜಗಳ ಮಾಡುತ್ತಾ, “ನಮ್ಮ ಶತ್ರುಗಳ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಫಿಲಿಷ್ಟಿಯರ ಕೈಯಿಂದ ನಮ್ಮನ್ನು ವಿಮೋಚನೆ ಮಾಡಿದವನು ಅರಸನೇ, ಆದರೆ ಈಗ ಅಬ್ಷಾಲೋಮನಿಗೋಸ್ಕರ ದೇಶವನ್ನು ಬಿಟ್ಟು ಓಡಿಹೋಗಿದ್ದಾನೆ.</verse>
				<verse number="10">ನಮ್ಮನ್ನು ಆಳಲು ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತನು. ನಾವು ಈಗ ಅರಸನನ್ನು ತಿರುಗಿ ಕರೆದುಕೊಂಡು ಬಾರದೆ, ಸುಮ್ಮನೆ ಇರುವುದು ಏಕೆ?” ಎಂದರು.</verse>
				<verse number="11">ಆಗ ಅರಸನಾದ ದಾವೀದನು ಯಾಜಕರಾದ ಚಾದೋಕನ ಬಳಿಗೂ, ಅಬಿಯಾತರನ ಬಳಿಗೂ ಸೇವಕರನ್ನು ಕಳುಹಿಸಿ, “ನೀವು ಯೆಹೂದದ ಹಿರಿಯರಿಗೆ, ‘ಸಮಸ್ತ ಇಸ್ರಾಯೇಲಿನ ಮಾತು ಅರಸನಿಗೆ ಅವನ ಅರಮನೆಯಲ್ಲಿಯೇ ತಿಳಿದಿರುವಾಗ, ಅರಸನನ್ನು ಅವನ ಮನೆಗೆ ತಿರುಗಿ ಕರೆದುಕೊಂಡು ಬರುವಂತೆ ನೀವು ಹಿಂಜರಿದದ್ದೇನು?</verse>
				<verse number="12">ನೀವು ನನ್ನ ಸಹೋದರರೂ, ನನ್ನ ರಕ್ತವೂ, ನನ್ನ ಮಾಂಸವೂ ಆಗಿದ್ದೀರಿ. ಹಾಗಾದರೆ ಅರಸನನ್ನು ತಿರುಗಿ ಬರಮಾಡುವಂತೆ ನೀವು ಹಿಂಜರಿದದ್ದೇನು?’ ಎಂದು ತಿಳಿಸಿರಿ.</verse>
				<verse number="13">ಇದಲ್ಲದೆ ನೀವು ಅಮಾಸನಿಗೆ, ‘ನೀನು ನನ್ನ ರಕ್ತವೂ, ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ, ದೇವರು ನನಗೆ ಏನಾದರೂ ಮಾಡಲಿ,’ ಎಂದು ಹೇಳಿರಿ,” ಎಂದನು.</verse>
				<verse number="14">ಅರಸನು ಸಕಲ ಯೆಹೂದ ಜನರ ಹೃದಯವನ್ನು ಸಂಪೂರ್ಣವಾಗಿ ಗೆದ್ದುಕೊಂಡದ್ದರಿಂದ, ಅವರು ಅರಸನಿಗೆ, “ನೀನೂ, ನಿನ್ನ ಸಮಸ್ತ ಸೇವಕರೂ ತಿರುಗಿ ಬನ್ನಿರಿ,” ಎಂದು ಹೇಳಿ ಕಳುಹಿಸಿದರು.</verse>
				<verse number="15">ಅರಸನು ತಿರುಗಿ ಯೊರ್ದನಿನವರೆಗೂ ಬಂದನು. ಯೆಹೂದದವರು ಅರಸನನ್ನು ಎದುರುಗೊಳ್ಳುವದಕ್ಕೆ ಹೋಗಿ, ಅರಸನು ಯೊರ್ದನನ್ನು ದಾಟುವ ಹಾಗೆ ಮಾಡುವುದಕ್ಕೆ ಗಿಲ್ಗಾಲಿಗೆ ಬಂದರು.</verse>
				<verse number="16">ಬಹುರೀಮಿನವನೂ ಬೆನ್ಯಾಮೀನ್ಯನೂ ಗೇರನ ಮಗ ಶಿಮ್ಮಿಯು ತ್ವರೆಯಾಗಿ ಯೆಹೂದ ಜನರ ಸಂಗಡ ಅರಸ ದಾವೀದನನ್ನು ಎದುರುಗೊಳ್ಳುವುದಕ್ಕೆ ಬಂದನು.</verse>
				<verse number="17">ಅವನ ಸಂಗಡ ಬೆನ್ಯಾಮೀನ್ಯರಾದ ಸಾವಿರ ಜನರೂ, ಸೌಲನ ಮನೆಯ ಸೇವಕ ಚೀಬನೂ, ಅವನ ಸಂಗಡ ಹದಿನೈದು ಮಂದಿ ಪುತ್ರರೂ, ಅವನ ಇಪ್ಪತ್ತು ಮಂದಿ ಸೇವಕರೂ ಯೊರ್ದನನ್ನು ದಾಟಿ, ಅರಸನಿಗೆ ಎದುರಾಗಿ ಬಂದರು.</verse>
				<verse number="18">ಅರಸನ ಮನೆಯವರನ್ನು ಈಚೆ ದಡಕ್ಕೆ ತರುವುದಕ್ಕೂ, ಅವನ ದೃಷ್ಟಿಗೆ ಒಳ್ಳೆಯದಾಗಿ ತೋರಿಸಿದ್ದನ್ನು ಮಾಡುವುದಕ್ಕೂ ಯೊರ್ದನನ್ನು ದಾಟಿ ಬಂದರು. ಆಗ ಗೇರನ ಮಗ ಶಿಮ್ಮಿಯು ಯೊರ್ದನನ್ನು ದಾಟುತ್ತಲೇ, ಅರಸನ ಮುಂದೆ ಬಿದ್ದು ಅರಸನಿಗೆ,</verse>
				<verse number="19">“ನನ್ನ ಒಡೆಯನೇ, ನನ್ನ ಅಕ್ರಮವನ್ನು ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖತನದಿಂದ ಮಾಡಿದ ಕಾರ್ಯವನ್ನು ನೆನಸದೆ, ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ.</verse>
				<verse number="20">ಏಕೆಂದರೆ ಪಾಪ ಮಾಡಿದೆನೆಂದು ನಿನ್ನ ಸೇವಕನಾಗಿರುವ ನಾನು ತಿಳಿದಿದ್ದೇನೆ. ಆದ್ದರಿಂದ ಇಗೋ, ನಾನು ಅರಸನಾದ ನನ್ನ ಒಡೆಯನನ್ನು ಎದುರುಗೊಳ್ಳಲು ಯೋಸೇಫ್ಯರಲ್ಲಿ ಎಲ್ಲರಿಗಿಂತ ಮುಂದಾಗಿ ಈ ದಿನ ಬಂದಿದ್ದೇನೆ,” ಎಂದನು.</verse>
				<verse number="21">ಆಗ ಚೆರೂಯಳ ಮಗ ಅಬೀಷೈಯನು ಉತ್ತರವಾಗಿ, “ಯೆಹೋವ ದೇವರ ಅಭಿಷಿಕ್ತನನ್ನು ಶಿಮ್ಮಿಯು ಶಪಿಸಿದ್ದರಿಂದ, ಅದಕ್ಕಾಗಿ ಅವನಿಗೆ ಮರಣದಂಡನೆ ಆಗಬೇಕಲ್ಲವೆ?” ಎಂದನು.</verse>
				<verse number="22">ಆದರೆ ದಾವೀದನು, “ಚೆರೂಯಳ ಮಕ್ಕಳೇ, ಈ ಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈ ಹೊತ್ತು ಇಸ್ರಾಯೇಲಿನಲ್ಲಿ ಯಾರಿಗೂ ಮರಣದಂಡನೆ ಆಗಬಾರದು, ಏಕೆಂದರೆ ಈ ಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ಗೊತ್ತಾಯಿತಲ್ಲಾ?” ಎಂದನು.</verse>
				<verse number="23">ಆಗ ಅರಸನು ಶಿಮ್ಮಿಗೆ, “ನೀನು ಸಾಯುವುದಿಲ್ಲ,” ಎಂದು ಅವನಿಗೆ ಆಣೆ ಇಟ್ಟನು.</verse>
				<verse number="24">ಸೌಲನ ಮೊಮ್ಮಗ ಮೆಫೀಬೋಶೆತನು ಅರಸನನ್ನು ಎದುರುಗೊಳ್ಳಲು ಬಂದನು. ಅರಸನು ಹೋದಂದಿನಿಂದ ಅವನು ಮರಳಿ ಸಮಾಧಾನವಾಗಿ ಬರುವವರೆಗೂ ಅವನು ತನ್ನ ಪಾದಗಳನ್ನು ಕಟ್ಟಿಕೊಳ್ಳಲಿಲ್ಲ, ಗಡ್ಡವನ್ನು ಕತ್ತರಿಸಿರಲಿಲ್ಲ, ಬಟ್ಟೆಯನ್ನು ಒಗೆಸಿಕೊಂಡಿರಲಿಲ್ಲ.</verse>
				<verse number="25">ಅವನು ಯೆರೂಸಲೇಮಿನಿಂದ ಅರಸನನ್ನು ಎದುರುಗೊಳ್ಳಲು ಬಂದಾಗ, ಅರಸನು ಅವನಿಗೆ, “ಮೆಫೀಬೋಶೆತನೇ, ನೀನು ಏಕೆ ನನ್ನ ಸಂಗಡ ಬಾರದೆ ಹೋದೆ?” ಎಂದನು.</verse>
				<verse number="26">ಅದಕ್ಕವನು, “ಅರಸನಾದ ನನ್ನ ಒಡೆಯನೇ, ನನ್ನ ಸೇವಕನು ನನ್ನನ್ನು ಮೋಸ ಮಾಡಿದನು. ಏಕೆಂದರೆ ನಿನ್ನ ಸೇವಕನು ಕುಂಟನಾಗಿರುವುದರಿಂದ ಒಂದು ಕತ್ತೆಯ ಮೇಲೆ ತಡಿಯನ್ನು ಹಾಕಿ, ಅದರ ಮೇಲೇರಿ ಅರಸನ ಸಂಗಡ ಹೋಗುವೆನೆಂದು ನಿನ್ನ ಸೇವಕನಾದ ನಾನು ಅವನಿಗೆ ಹೇಳಿದೆನು.</verse>
				<verse number="27">ಅವನು ಅರಸನಾದ ನನ್ನ ಒಡೆಯನಿಗೆ ನಿನ್ನ ಸೇವಕನ ಮೇಲೆ ಚಾಡಿಯನ್ನು ಹೇಳಿದನು. ಆದರೆ ಅರಸನಾದ ನನ್ನ ಒಡೆಯನು ದೇವದೂತನ ಹಾಗೆಯೇ ಇದ್ದಾನೆ. ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಮಾಡು.</verse>
				<verse number="28">ಏಕೆಂದರೆ ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರೂ ಸತ್ತವರಾಗಿ ಇದ್ದರೂ, ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವುದಕ್ಕೆ ಯೋಗ್ಯನೋ?” ಎಂದನು.</verse>
				<verse number="29">ಆಗ ಅರಸನು ಅವನಿಗೆ, “ಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡುವುದೇನು? ನೀನೂ, ಚೀಬನೂ ಭೂಮಿಯನ್ನು ಪಾಲು ಹಂಚಿಕೊಳ್ಳಿರಿ ಎಂದು ಹೇಳಿದ್ದೇನೆ,” ಎಂದನು.</verse>
				<verse number="30">ಮೆಫೀಬೋಶೆತನು ಅರಸನಿಗೆ, “ಹೌದು, ಅರಸನಾದ ನನ್ನ ಒಡೆಯನು ಸಮಾಧಾನದಿಂದ ತಿರುಗಿ ತನ್ನ ಮನೆಗೆ ಬಂದದ್ದೇ ಸಾಕು. ಅವನೇ ಸಮಸ್ತವನ್ನು ತೆಗೆದುಕೊಳ್ಳಲಿ,” ಎಂದನು.</verse>
				<verse number="31">ಇದಲ್ಲದೆ ಗಿಲ್ಯಾದ್ಯನಾದ ಬರ್ಜಿಲ್ಲೈಯು ರೋಗೆಲೀಮಿನಿಂದ ಅರಸನನ್ನು ಯೊರ್ದನ್ ದಾಟಿಸಲು ಮತ್ತು ಅಲ್ಲಿಂದ ಅವನನ್ನು ಕಳುಹಿಸಲು ಬಂದನು.</verse>
				<verse number="32">ಈ ಬರ್ಜಿಲ್ಲೈಯು ಎಂಬತ್ತು ವರ್ಷದವನಾಗಿ ಮಹಾವೃದ್ಧನಾಗಿದ್ದನು. ಅರಸನು ಮಹನಯಿಮಿನಲ್ಲಿ ವಾಸಿಸಿಸುವವರೆಗೂ ಇವನು ಅರಸನನ್ನು ಸಂರಕ್ಷಿಸಿದನು. ಏಕೆಂದರೆ ಅವನು ಬಹು ಸಿರಿವಂತ ಮನುಷ್ಯನಾಗಿದ್ದನು.</verse>
				<verse number="33">ಆದ್ದರಿಂದ ಅರಸನು ಬರ್ಜಿಲ್ಲೈಗೆ, “ನೀನು ನನ್ನ ಸಂಗಡ ಬಾ, ಯೆರೂಸಲೇಮಿನಲ್ಲಿ ನಿನ್ನನ್ನು ನನ್ನ ಬಳಿಯಲ್ಲಿ ಸಂರಕ್ಷಿಸುವೆನು,” ಎಂದನು.</verse>
				<verse number="34">ಆದರೆ ಬರ್ಜಿಲ್ಲೈಯು ಅರಸನಿಗೆ, “ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವಹಾಗೆ ನಾನು ಬದುಕುವ ವರುಷ ಎಷ್ಟು ಉಂಟು?</verse>
				<verse number="35">ನಾನು ಈ ಹೊತ್ತು ಎಂಬತ್ತು ವರ್ಷದವನು. ಇನ್ನು ಒಳ್ಳೆಯದು ಕೆಟ್ಟದ್ದು ಎಂಬ ಭೇದ ತಿಳಿಯುವೆನೋ? ತಿನ್ನುವುದು, ಕುಡಿಯುವುದು ನಿನ್ನ ಸೇವಕನಿಗೆ ರುಚಿಕರವಾಗಿರುವುದೋ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೋ? ಹಾಗಾದರೆ ನಿನ್ನ ಸೇವಕನು ಅರಸನಾದ ನನ್ನ ಒಡೆಯನಿಗೆ ಏಕೆ ಇನ್ನು ಭಾರವಾಗಿರಬೇಕು?</verse>
				<verse number="36">ನಿನ್ನ ಸೇವಕನು ಸ್ವಲ್ಪ ದೂರ ಯೊರ್ದನನ್ನು ದಾಟುವವರೆಗೂ ಅವರ ಅರಸನ ಸಂಗಡ ಬರುವನು. ಅದಕ್ಕೆ ಇಂಥಾ ಬಹುಮಾನ ಕೊಡುವುದೇನು?</verse>
				<verse number="37">ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರುಗಿ ಹೋಗಿ, ನನ್ನ ಪಟ್ಟಣದಲ್ಲಿ ನನ್ನ ತಂದೆತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ನಿನ್ನ ಸೇವಕನಾದ ನನ್ನ ಮಗ ಕಿಮ್ಹಾಮನು ಬರುವನು. ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಅವನಿಗೆ ಮಾಡು,” ಎಂದನು.</verse>
				<verse number="38">ಆಗ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ನಾನು ಅವನಿಗೆ ಮಾಡುವೆನು. ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು,” ಎಂದನು.</verse>
				<verse number="39">ಜನರೆಲ್ಲರೂ ಯೊರ್ದನನ್ನು ದಾಟಿದರು. ಅರಸನು ದಾಟಿ ಬಂದಾಗ, ಬರ್ಜಿಲ್ಲೈಯನ್ನು ಮುದ್ದಿಟ್ಟು ಅವನನ್ನು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಸ್ಥಳಕ್ಕೆ ಹಿಂದಿರುಗಿದನು.</verse>
				<verse number="40">ಅರಸನು ಗಿಲ್ಗಾಲಿಗೆ ಬಂದನು. ಹಾಗೆಯೇ ಅವನ ಸಂಗಡ ಕಿಮ್ಹಾಮನು ಬಂದನು. ಯೆಹೂದದ ಸೈನಿಕರೆಲ್ಲರೂ, ಇಸ್ರಾಯೇಲಿನ ಅರ್ಧ ಪಾಲು ಸೈನಿಕರೂ ಅರಸನನ್ನು ಕರೆದುಕೊಂಡು ಬಂದರು.</verse>
				<verse number="41">ಇಸ್ರಾಯೇಲರೆಲ್ಲರೂ ಅರಸನ ಬಳಿಗೆ ಬಂದು ಅರಸನಿಗೆ, “ನಮ್ಮ ಸಹೋದರರಾದ ಯೆಹೂದದ ಮನುಷ್ಯರು ಕಳ್ಳತನವಾಗಿ ನಿನ್ನನ್ನು ಕರೆತಂದದ್ದೇನು? ಅರಸನನ್ನೂ, ಅವನ ಮನೆಯವರನ್ನೂ, ಅವನ ಸಂಗಡ ಇರುವ ದಾವೀದನ ಸಕಲ ಮನುಷ್ಯರನ್ನೂ ಯೊರ್ದನನ್ನು ದಾಟಿಸಿದ್ದೇನು?” ಎಂದರು.</verse>
				<verse number="42">ಆಗ ಯೆಹೂದದವರೆಲ್ಲರೂ ಇಸ್ರಾಯೇಲರಿಗೆ ಉತ್ತರವಾಗಿ, “ಅರಸನು ನಮಗೆ ಸಮೀಪ ಬಂಧುವಾದುದರಿಂದ, ಈ ಕಾರ್ಯಕ್ಕೋಸ್ಕರ ನೀವು ಕೋಪಗೊಂಡಿರುವುದೇನು? ನಾವು ಅರಸನ ಖರ್ಚಿನಿಂದ ಏನಾದರೂ ಊಟ ಮಾಡಿದೆವೋ? ನಾವು ನಮಗಾಗಿ ಏನನ್ನಾದರೂ ತೆಗೆದುಕೊಂಡಿದ್ದೇವೆಯೇ?” ಎಂದರು.</verse>
				<verse number="43">ಆದರೆ ಇಸ್ರಾಯೇಲರು ಯೆಹೂದ ಜನರಿಗೆ ಉತ್ತರವಾಗಿ, “ಅರಸನಲ್ಲಿ ನಮಗೆ ಹತ್ತು ಪಾಲು ಉಂಟು. ನಿಮಗಿಂತ ನಮಗೆ ದಾವೀದನ ಬಾಧ್ಯತೆಯು ಅಧಿಕವಾಗಿದೆ. ನಮ್ಮ ಅರಸನನ್ನು ತಿರುಗಿ ಕರೆದುಕೊಂಡು ಬರುವುದರ ವಿಷಯದಲ್ಲಿ ಮೊದಲು ಮಾತನಾಡಿದವರು ನಾವಲ್ಲವೋ? ಹಾಗಾದರೆ ನಮ್ಮನ್ನು ಏಕೆ ಅಲ್ಪರಾಗಿ ಎಣಿಸಿದಿರಿ?” ಎಂದರು. ಆದರೆ ಇಸ್ರಾಯೇಲರ ಮಾತುಗಳಿಗಿಂತ ಯೆಹೂದ ಜನರ ಮಾತುಗಳು ಕಠಿಣವಾಗಿದ್ದವು.</verse>
			</chapter>
			<chapter number="20">
				<verse number="1">ಬೆನ್ಯಾಮೀನ್ಯನಾದ ಬಿಕ್ರಿಯ ಮಗ ಶೆಬನೆಂಬ ಹೆಸರುಳ್ಳ ಒಬ್ಬ ನೀಚ ವ್ಯಕ್ತಿ ಅಲ್ಲಿದ್ದನು. ಅವನು ತುತೂರಿಯನ್ನು ಊದಿ ಹೀಗಂದನು, “ನಮಗೆ ದಾವೀದನಲ್ಲಿ ಪಾಲಿಲ್ಲ, ಇಷಯನ ಮಗನ ಬಳಿಯಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ.”</verse>
				<verse number="2">ಆಗ ಇಸ್ರಾಯೇಲರೆಲ್ಲರೂ ದಾವೀದನನ್ನು ಬಿಟ್ಟು ಸರಿದು, ಬಿಕ್ರಿಯ ಮಗ ಶೆಬನ ಹಿಂದೆ ಹೋದರು. ಆದರೆ ಯೊರ್ದನಿನಿಂದ ಯೆರೂಸಲೇಮಿನವರೆಗೂ ಇರುವ ಯೆಹೂದ ಜನರು ತಮ್ಮ ಅರಸನನ್ನು ಅಂಟಿಕೊಂಡಿದ್ದರು.</verse>
				<verse number="3">ದಾವೀದನು ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ಬಂದನು. ಅರಸನು ಮನೆಯಲ್ಲಿ ಕಾಯಲು ಇಟ್ಟ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ತೆಗೆದುಕೊಂಡು, ಅವರನ್ನು ಒಂದು ಕಾವಲಿನಲ್ಲಿರಿಸಿ ಸಾಕುತ್ತಿದ್ದನು. ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಅವರ ಸಂಪರ್ಕ ಮಾಡಲಿಲ್ಲ. ಹಾಗೆಯೇ ಅವರು ಸಾಯುವ ದಿವಸದವರೆಗೂ ವಿಧವೆಯರಂತೆ ಇದ್ದು ಕಾವಲಲ್ಲಿರಬೇಕಾಯಿತು.</verse>
				<verse number="4">ಅರಸನು ಅಮಾಸನಿಗೆ, “ನೀನು ಮೂರು ದಿವಸಗಳೊಳಗೆ ಯೆಹೂದ ಜನರನ್ನು ಕೂಡಿಸಿಕೊಂಡು ನನ್ನ ಬಳಿಗೆ ಬಾ ಮತ್ತು ನೀನೇ ಇಲ್ಲಿ ಇರು,” ಎಂದನು.</verse>
				<verse number="5">ಹಾಗೆಯೇ ಅಮಾಸನು ಯೆಹೂದ ಜನರನ್ನು ಕೂಡಿಸಲು ಹೋದನು. ಆದರೆ ಅವನು ತನಗೆ ನೇಮಿಸಿದ ಕಾಲಕ್ಕಿಂತ ಬಾರದೆ ಹೆಚ್ಚು ತಡಮಾಡಿದನು.</verse>
				<verse number="6">ಆದ್ದರಿಂದ ದಾವೀದನು ಅಬೀಷೈಯನಿಗೆ, “ಈಗ ಅಬ್ಷಾಲೋಮನಿಗಿಂತ ಬಿಕ್ರಿಯ ಮಗ ಶೆಬನು ನಮಗೆ ಹೆಚ್ಚಿನ ಕೇಡನ್ನು ಮಾಡುವನು. ಅವನು ತನಗೆ ಗಡಿ ಪಟ್ಟಣಗಳನ್ನು ಸಂಪಾದಿಸಿಕೊಂಡು, ನಮ್ಮಿಂದ ತಪ್ಪಿಸಿಕೊಳ್ಳದೆ ಹಾಗೆ ನೀನು ನಿನ್ನ ಯಜಮಾನನ ಸೇವಕರನ್ನು ತೆಗೆದುಕೊಂಡು ಹೊರಟು ಅವನನ್ನು ಹಿಂದಟ್ಟು,” ಎಂದನು.</verse>
				<verse number="7">ಹಾಗೆಯೇ ಅವನ ಹಿಂದೆ ಯೋವಾಬನ ಜನರೂ, ಕೆರೇತ್ಯರೂ, ಪೆಲೇತ್ಯರೂ, ಸಮಸ್ತ ಪರಾಕ್ರಮಶಾಲಿಗಳೂ ಅಬೀಷೈಯನ ನೇತೃತ್ವದಲ್ಲಿ ಬಿಕ್ರಿಯ ಮಗ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು.</verse>
				<verse number="8">ಅವರು ಗಿಬ್ಯೋನಿನ ಸಮೀಪದಲ್ಲಿರುವ ದೊಡ್ಡ ಕಲ್ಲಿನ ಬಳಿಗೆ ಬಂದಾಗ, ಅಮಾಸನು ಅವರೆದುರಿಗೆ ಬಂದನು. ಯೋವಾಬನು ತಾನು ಧರಿಸಿದ್ದ ಅಂಗಿಯ ಮೇಲೆ ಒಂದು ನಡುಕಟ್ಟನ್ನು ಕಟ್ಟಿಕೊಂಡಿದ್ದನು. ಅದರಲ್ಲಿ ಒರೆಯ ಸಂಗಡ ಒಂದು ಕಠಾರಿ ಅವನ ನಡುವಿನಲ್ಲಿ ತೂಗುತ್ತಿತ್ತು. ಅವನು ನಡೆಯುವಾಗ ಕಠಾರಿ ಒರೆಯಿಂದ ಕೆಳಗೆ ಬಿದ್ದಿತು.</verse>
				<verse number="9">ಆಗ ಯೋವಾಬನು ಅಮಾಸನಿಗೆ, “ನನ್ನ ಸಹೋದರನೇ, ಕ್ಷೇಮವೋ?” ಎಂದನು. ಯೋವಾಬನು ಅವನನ್ನು ಮುದ್ದಿಟ್ಟುಕೊಳ್ಳಲು ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು.</verse>
				<verse number="10">ಆದರೆ ಅಮಾಸನು ಯೋವಾಬನ ಕೈಯಲ್ಲಿ ಕಠಾರಿ ಇದ್ದುದರಿಂದ ಎಚ್ಚರಿಕೆ ತೆಗೆದುಕೊಳ್ಳದಿರುವಾಗ, ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಹೊಟ್ಟೆಯಲ್ಲಿ ತಿವಿದನು. ಎರಡನೆಯ ಸಾರಿ ಹೊಡೆಯಲಿಲ್ಲ. ಅವನು ಸತ್ತನು. ಯೋವಾಬನೂ, ಅವನ ಸಹೋದರನಾದ ಅಬೀಷೈಯನೂ ಬಿಕ್ರಿಯ ಮಗ ಶೆಬನನ್ನು ಹಿಂದಟ್ಟಿದರು.</verse>
				<verse number="11">ಯೋವಾಬನ ಜನರಲ್ಲಿ ಒಬ್ಬನು ಸತ್ತವನ ಬಳಿಯಲ್ಲಿ ನಿಂತು, “ಯಾವನು ಯೋವಾಬನ ಮೇಲೆ ಇಷ್ಟವುಳ್ಳವನೋ, ಯಾವನು ದಾವೀದನಿಗೆ ಹೊಂದಿದವನೋ, ಅವನು ಯೋವಾಬನ ಹಿಂದೆ ಹೋಗಲಿ,” ಎಂದನು.</verse>
				<verse number="12">ಆದರೆ ಅಮಾಸನು ರಾಜಮಾರ್ಗದೊಳಗೆ ರಕ್ತದಲ್ಲಿ ಹೊರಳಾಡುತ್ತಾ ಇದ್ದನು. ಜನರೆಲ್ಲರು ನಿಂತಿರುವುದನ್ನು ಆ ಮನುಷ್ಯನು ಕಂಡಾಗ, ಅವನು ಅಮಾಸನನ್ನು ದಾರಿಯಿಂದ ಹೊಲಕ್ಕೆ ಎಳೆದು ಹಾಕಿ, ಅವನ ಮೇಲೆ ಒಂದು ವಸ್ತ್ರವನ್ನು ಹಾಕಿದನು.</verse>
				<verse number="13">ಶವವನ್ನು ರಾಜಮಾರ್ಗದಿಂದ ಎಳೆದು ಆಚೆ ಹಾಕಿದ ತರುವಾಯ ಜನರೆಲ್ಲರೂ ಮುಂದಕ್ಕೆ ಹೋಗಿ, ಬಿಕ್ರಿಯ ಮಗನಾದ ಶೆಬನನ್ನು ಹಿಂದಟ್ಟಿ ಯೋವಾಬನ ಹಿಂದೆ ಹೋದರು.</verse>
				<verse number="14">ಶೆಬನು ಇಸ್ರಾಯೇಲಿನ ಎಲ್ಲಾ ಗೋತ್ರಗಳಲ್ಲಿ ಹಾದು ಬೇತ್ ಮಾಕದ ಆಬೇಲಿಗೆ ಬಂದು, ಬೇರ‍್ಯರ ಪ್ರದೇಶದ ಮಾರ್ಗವಾಗಿ ಹೋದನು. ಆಗ ಬೇರ‍್ಯರು ಕೂಡಿಕೊಂಡು ಅವನ ಸಂಗಡ ಹೋದರು.</verse>
				<verse number="15">ಯೋವಾಬನ ಜೊತೆಗಿದ್ದ ಸೈನಿಕರು ಬಂದು ಆಬೇಲ್ ಬೇತ್ ಮಾಕಾ ಊರಿಗೆ ಮುತ್ತಿಗೆ ಹಾಕಿ, ಪಟ್ಟಣಕ್ಕೆದುರಾಗಿ ಊರು ಗೋಡೆಯವರೆಗೆ ಮಣ್ಣಿನ ದಿಬ್ಬವನ್ನು ಮಾಡಿದರು. ಯೋವಾಬನ ಸಂಗಡದಲ್ಲಿರುವ ಜನರೆಲ್ಲರೂ ಗೋಡೆಯನ್ನು ಕೆಡವಿಬಿಡುವುದಕ್ಕೆ ಪ್ರಯತ್ನಿಸಿದರು.</verse>
				<verse number="16">ಆಗ ಜ್ಞಾನವುಳ್ಳ ಒಬ್ಬ ಸ್ತ್ರೀಯು ಪಟ್ಟಣದಲ್ಲಿಂದ, “ಕೇಳಿರಿ, ಕೇಳಿರಿ. ನಾನು ಯೋವಾಬನ ಸಂಗಡ ಮಾತನಾಡುವ ಹಾಗೆ ಅವನು ಇಲ್ಲಿಗೆ ಸಮೀಪಿಸಲು ಬರಹೇಳಿರಿ,” ಎಂದು ಕೂಗಿ ಬೇಡಿಕೊಂಡಳು.</verse>
				<verse number="17">ಅವನು ಅವಳ ಬಳಿಗೆ ಸಮೀಪಿಸಿ ಬಂದಾಗ, ಆ ಸ್ತ್ರೀಯು, “ನೀನು ಯೋವಾಬನೋ?” ಎಂದಳು. ಅದಕ್ಕೆ ಅವನು, “ಹೌದು, ನಾನೇ,” ಎಂದು ಉತ್ತರಕೊಟ್ಟನು. ಆಕೆ, “ನಿನ್ನ ದಾಸಿಯ ಮಾತನ್ನು ಕೇಳಿ,” ಎಂದಳು. ಅದಕ್ಕೆ ಅವನು, “ನಾನು ಕೇಳುತ್ತೇನೆ,” ಎಂದನು.</verse>
				<verse number="18">ಅವಳು ಮಾತನಾಡುತ್ತಾ, “ಪೂರ್ವಕಾಲದಲ್ಲಿ, ‘ಆಬೇಲಿನವರ ಉತ್ತರ ಪಡೆಯಿರಿ’ ಎಂದು ಹೇಗೆ ವ್ಯಾಜ್ಯ ತೀರಿಸಿಕೊಳ್ಳುತ್ತಿದ್ದರು.</verse>
				<verse number="19">ಹಾಗೆ ನಾವು ಇಸ್ರಾಯೇಲಿನಲ್ಲಿ ಸಮಾಧಾನವುಳ್ಳವರೂ, ನಂಬಿಗಸ್ತರೂ ಆಗಿದ್ದೇವೆ. ಇಸ್ರಾಯೇಲಿನ ತಾಯಿಯಂತಿರುವ ನಮ್ಮ ಪಟ್ಟಣವನ್ನು ಹಾಳುಮಾಡಲು ಯೆಹೋವ ದೇವರ ಸೊತ್ತನ್ನು ಕಬಳಿಸುವುದಕ್ಕೆ ಏಕೆ ಪ್ರಯತ್ನಿಸುತ್ತಿದ್ದೀರಿ?” ಎಂದಳು.</verse>
				<verse number="20">ಅದಕ್ಕೆ ಯೋವಾಬನು ಉತ್ತರವಾಗಿ, “ನಾನು ಅದನ್ನು ಎಂದಿಗೂ ಮಾಡುವುದಿಲ್ಲ. ನುಂಗುವುದನ್ನೂ ಹಾಳುಮಾಡುವುದನ್ನೂ ನಾನು ಎಂದಿಗೂ ಮಾಡುವುದಿಲ್ಲ.</verse>
				<verse number="21">ಕಾರ್ಯವು ಹಾಗಲ್ಲ. ಏಕೆಂದರೆ ಬಿಕ್ರಿಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯೀಮ್ ಬೆಟ್ಟದವನಾದ ಒಬ್ಬ ಮನುಷ್ಯನು, ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ. ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು,” ಎಂದನು. ಆ ಸ್ತ್ರೀಯು ಯೋವಾಬನಿಗೆ, “ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಕಡೆಗೆ ಎಸೆಯಲಾಗುವುದು,” ಎಂದಳು.</verse>
				<verse number="22">ಆ ಸ್ತ್ರೀಯು ತನ್ನ ಜ್ಞಾನದಿಂದ ಸಮಸ್ತ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರಿಯ ಮಗ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ, ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನೂ ತಮ್ಮ ತಮ್ಮ ಮನೆಗಳಿಗೆ ಹೋದರು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂದಿರುಗಿ ಬಂದನು.</verse>
				<verse number="23">ಯೋವಾಬನು ಇಸ್ರಾಯೇಲಿನ ಸಮಸ್ತ ಸೈನ್ಯದ ಅಧಿಪತಿಯಾಗಿದ್ದನು. ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು.</verse>
				<verse number="24">ಅದೋನೀರಾಮನು ದಾಸರ ಮೇಲೆ ಉಸ್ತುವಾರಿ ವಹಿಸಿದ್ದನು. ಅಹೀಲೂದನ ಮಗ ಯೆಹೋಷಾಫಾಟನು ಆಸ್ಥಾನದ ಆಗುಹೋಗುಗಳನ್ನು ದಾಖಲಿಸುವವನಾಗಿದ್ದನು.</verse>
				<verse number="25">ಶೆವನು ಕಾರ್ಯದರ್ಶಿಯಾಗಿದ್ದನು. ಚಾದೋಕನೂ ಅಬಿಯಾತರನೂ ಯಾಜಕರಾಗಿದ್ದರು.</verse>
				<verse number="26">ಯಾಯೀರಿನವನಾದ ಈರನೂ ದಾವೀದನ ಯಾಜಕನಾಗಿದ್ದನು.</verse>
			</chapter>
			<chapter number="21">
				<verse number="1">ದಾವೀದನ ದಿವಸಗಳಲ್ಲಿ ವರ್ಷದಿಂದ ವರ್ಷಕ್ಕೆ ಮೂರು ವರ್ಷ ಬರ ಉಂಟಾಗಿತ್ತು. ಆಗ ದಾವೀದನು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು, “ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಈ ಬರ ಬಂದಿದೆ,” ಎಂದು ಹೇಳಿದರು.</verse>
				<verse number="2">ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆಕಳುಹಿಸಿದನು. ಗಿಬ್ಯೋನ್ಯರು ಇಸ್ರಾಯೇಲರಿಗೆ ಸೇರಿದವರಲ್ಲ. ಅಮೋರಿಯರಲ್ಲಿ ಉಳಿದ ಜನರಾಗಿದ್ದರು. ಅವರನ್ನು ಕೊಲ್ಲುವುದಿಲ್ಲವೆಂದು ಇಸ್ರಾಯೇಲರು ಆಣೆ ಇಟ್ಟಿದ್ದರು. ಆದರೆ ಸೌಲನು ಇಸ್ರಾಯೇಲರಿಗಾಗಿಯೂ, ಯೆಹೂದದವರಿಗಾಗಿಯೂ ತನಗಿದ್ದ ಆಸಕ್ತಿಯಿಂದ ಅವರನ್ನು ಕೊಂದುಹಾಕಲು ಪ್ರಯತ್ನಮಾಡಿದ್ದನು.</verse>
				<verse number="3">ದಾವೀದನು ಗಿಬ್ಯೋನ್ಯರಿಗೆ, “ನಾನು ನಿಮಗೆ ಮಾಡಬೇಕಾದದ್ದೇನು? ನೀವು ಯೆಹೋವ ದೇವರ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ, ನಾನು ಯಾವುದರಿಂದ ಪ್ರಾಯಶ್ಚಿತ್ತ ಮಾಡಲಿ,” ಎಂದು ಕೇಳಿದನು.</verse>
				<verse number="4">ಆಗ ಗಿಬ್ಯೋನ್ಯರು ಅವನಿಗೆ, “ಸೌಲನ ಕೈಯಿಂದಲಾದರೂ, ಅವನ ಮನೆಯವರ ಕೈಯಿಂದಲಾದರೂ, ನಮಗೆ ಬೆಳ್ಳಿಯಾದರೂ, ಬಂಗಾರವಾದರೂ ಬೇಡ. ನೀನು ಈ ಕಾರ್ಯಕ್ಕೋಸ್ಕರ ಇಸ್ರಾಯೇಲಿನಲ್ಲಿ ಒಬ್ಬನನ್ನಾದರೂ ಕೊಂದುಹಾಕಬೇಕೆಂಬುದು ನಮಗೆ ಅಗತ್ಯವಿಲ್ಲ,” ಎಂದರು. ಆಗ ಅವನು, “ನೀವು ನನಗೆ ಏನು ಹೇಳುತ್ತೀರೋ, ನಾನು ನಿಮಗೆ ಮಾಡುವೆನು,” ಎಂದನು.</verse>
				<verse number="5">ಅವರು ಅರಸನಿಗೆ, “ಯಾವನು ನಮ್ಮನ್ನು ಸಂಹರಿಸಿಬಿಟ್ಟು, ನಾವು ಇಸ್ರಾಯೇಲಿನ ಸಮಸ್ತ ಮೇರೆಗಳೊಳಗೆ ನಿಲ್ಲದೆ ನಾಶವಾಗುವ ಹಾಗೆ ನಮಗೆ ಕೇಡು ಮಾಡಲು ನೆನಸಿದನೋ,</verse>
				<verse number="6">ಅವನ ಪುತ್ರರಲ್ಲಿ ಏಳುಮಂದಿಯನ್ನು ನಮಗೆ ಒಪ್ಪಿಸು. ಆಗ ನಾವು ಯೆಹೋವ ದೇವರು ಆಯ್ದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಯೆಹೋವ ದೇವರಿಗೋಸ್ಕರ ಗಲ್ಲಿಗೆ ಹಾಕುವೆವು,” ಎಂದರು. ಅದಕ್ಕೆ ಅರಸನು, “ನಾನು ಒಪ್ಪಿಸಿಕೊಡುವೆನು,” ಎಂದನು.</verse>
				<verse number="7">ಆದರೆ ತಮಗೂ, ದಾವೀದನಿಗೂ, ಸೌಲನ ಮಗ ಯೋನಾತಾನನಿಗೂ ಯೆಹೋವ ದೇವರನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ, ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ,</verse>
				<verse number="8">ಅಯ್ಯಾಹನ ಮಗಳಾಗಿರುವ ರಿಚ್ಪಳು ಸೌಲನಿಗೆ ಹೆತ್ತ ಅವಳ ಇಬ್ಬರು ಮಕ್ಕಳಾದ ಅರ್ಮೋನಿಯನ್ನೂ, ಮತ್ತೊಬ್ಬ ಮೆಫೀಬೋಶೆತನನ್ನೂ, ಸೌಲನ ಮಗಳಾಗಿರುವ ಮೇರಬಳು ಮೆಹೋಲದವನಾದ ಬರ್ಜಿಲ್ಲೈಯ ಮಗನಾಗಿರುವ ಅದ್ರಿಯೇಲನಿಗೆ ಸಾಕಿದ ಐದು ಮಂದಿ ಮಕ್ಕಳನ್ನೂ ಹಿಡಿದುಕೊಂಡು,</verse>
				<verse number="9">ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಇವರನ್ನು ಕೊಂದು, ಯೆಹೋವ ದೇವರ ಮುಂದೆ ಬೆಟ್ಟದ ಮೇಲೆ ನೇತುಹಾಕಿದರು. ಈ ಏಳುಮಂದಿಯೂ ಒಂದೇ ಸಾರಿ ಹತರಾದರು. ಇವರನ್ನು ಕೊಂದಾಗ ಜವೆಗೋಧಿ ಸುಗ್ಗಿಯ ಆರಂಭವಾಗಿತ್ತು.</verse>
				<verse number="10">ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತೆಗೆದುಕೊಂಡುಹೋಗಿ, ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಅದರ ಮೇಲೆ ಕುಳಿತುಕೊಂಡಳು. ಸುಗ್ಗಿಯ ದಿವಸ ಮೊದಲ್ಗೊಂಡು ಆಕಾಶದಿಂದ ಶವಗಳ ಮೇಲೆ ಮಳೆ ಬೀಳುವ ತನಕ, ಹಗಲಲ್ಲಿ ಆಕಾಶದ ಪಕ್ಷಿಗಳಾದರೂ, ರಾತ್ರಿಯಲ್ಲಿ ಕಾಡುಮೃಗಗಳಾದರೂ ಶವಗಳನ್ನು ತಿನ್ನದಂತೆ ಕಾಯುತ್ತಿದ್ದಳು.</verse>
				<verse number="11">ಅಯ್ಯಾಹನ ಮಗಳಾದ ರಿಚ್ಪಳೆಂಬ ಸೌಲನ ಉಪಪತ್ನಿ ಮಾಡಿದ್ದು ದಾವೀದನಿಗೆ ತಿಳಿಸಲಾಯಿತು.</verse>
				<verse number="12">ಆಗ ದಾವೀದನು ಹೋಗಿ ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕೆ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಗಿಲ್ಬೋವದಲ್ಲಿ ಸೌಲನನ್ನು ಸೋಲಿಸಿದ ನಂತರ, ಅವನ ಮತ್ತು ಅವನ ಮಗನಾದ ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ತೂಗುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಆ ಶವಗಳನ್ನು ಕದ್ದುಕೊಂಡು ಹೋಗಿದ್ದರು.</verse>
				<verse number="13">ದಾವೀದನು ಸೌಲನ ಎಲುಬುಗಳನ್ನೂ ಅವನ ಮಗನಾದ ಯೋನಾತಾನನ ಎಲುಬುಗಳನ್ನೂ ಗಿಬ್ಯೋನಿನಲ್ಲಿ ಹತರಾದ ಆ ಮನುಷ್ಯರ ಎಲುಬುಗಳನ್ನೂ ಅವರಿಂದ ತೆಗೆದುಕೊಂಡನು.</verse>
				<verse number="14">ಅವುಗಳನ್ನು ಬೆನ್ಯಾಮೀನನ ದೇಶದ ಚೇಲದಲ್ಲಿರುವ ಸೌಲನ ತಂದೆಯಾದ ಕೀಷನ ಸಮಾಧಿಯಲ್ಲಿ ಹೂಳಿಟ್ಟರು. ಅವರು ಅರಸನು ಆಜ್ಞಾಪಿಸಿದ್ದನ್ನೆಲ್ಲಾ ತೀರಿಸಿದ ತರುವಾಯ, ದೇವರು ದೇಶಕ್ಕೋಸ್ಕರ ಮಾಡಿದ ಬಿನ್ನಹವನ್ನು ಕೇಳಿದರು.</verse>
				<verse number="15">ಫಿಲಿಷ್ಟಿಯರು ತಿರುಗಿ ಇಸ್ರಾಯೇಲರ ಮೇಲೆ ಯುದ್ಧಮಾಡಿದರು. ಆಗ ದಾವೀದನು ತನ್ನ ಜನರೊಂದಿಗೆ ಹೋಗಿ, ಫಿಲಿಷ್ಟಿಯರ ಸಂಗಡ ಯುದ್ಧಮಾಡಿದನು. ದಾವೀದನು ದಣಿದು ಹೋದನು.</verse>
				<verse number="16">ಆಗ ಮುನ್ನೂರು ಬೆಳ್ಳಿ ನಾಣ್ಯದ ತೂಕದ ಕಂಚು ಈಟಿಯುಳ್ಳ, ಹೊಸ ಖಡ್ಗವನ್ನು ನಡುವಿನಲ್ಲಿ ಕಟ್ಟಿಕೊಂಡಿರುವ ರೆಫಾಯನ ಮಕ್ಕಳಲ್ಲಿ ಇಷ್ಬೀಬೆನೋಬನು ದಾವೀದನನ್ನು ಕೊಲ್ಲಬೇಕೆಂದಿದ್ದನು.</verse>
				<verse number="17">ಆದರೆ ಚೆರೂಯಳ ಮಗ ಅಬೀಷೈಯನು ಅವನಿಗೆ ಸಹಾಯವಾಗಿ ಬಂದು, ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿದನು. ಆಗ ದಾವೀದನ ಜನರು ಅವನಿಗೆ, “ಇಸ್ರಾಯೇಲಿನ ಬೆಳಕಾಗಿರುವ ನೀನು ಆರಿಹೋಗದಂತೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಬರಬೇಡ,” ಎಂದು ಆಣೆ ಇಟ್ಟರು.</verse>
				<verse number="18">ಇದರ ತರುವಾಯ, ಫಿಲಿಷ್ಟಿಯರ ಸಂಗಡ ಗೋಬದಲ್ಲಿ ಮತ್ತೊಂದು ಯುದ್ಧನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಫ್ ಎಂಬವನನ್ನು ಕೊಂದನು.</verse>
				<verse number="19">ಅನಂತರ ಫಿಲಿಷ್ಟಿಯರ ಸಂಗಡ ಗೋಬದಲ್ಲಿ ಯುದ್ಧ ಉಂಟಾದಾಗ, ಬೇತ್ಲೆಹೇಮಿನವನಾದ ಯಾಯೀರನ ಮಗನಾದ ಎಲ್ಹನಾನನು ಗಿತ್ತೀಯನಾದ ಗೊಲ್ಯಾತನ ಸಹೋದರರನ್ನು ಕೊಂದನು. ಈ ಗೊಲ್ಯಾತನ ಈಟಿಯ ಹಿಡಿಕೆಯು ನೇಯುವವರ ಕುಂಟೆ ಕಟ್ಟಿಗೆಗೆ ಸಮನಾಗಿತ್ತು.</verse>
				<verse number="20">ಇನ್ನೊಂದು ಸಾರಿ ಗತ್ ಊರಿನಲ್ಲಿ ಯುದ್ಧ ಉಂಟಾದಾಗ, ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು. ಅವನ ಕೈಕಾಲುಗಳ ಬೆರಳುಗಳು ಆರಾರರಂತೆ, ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನು ಸಹ ರೆಫಾಯನಿಗೆ ಹುಟ್ಟಿದವನಾಗಿದ್ದನು.</verse>
				<verse number="21">ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾದ ಶಿಮೆಯನ ಮಗನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.</verse>
				<verse number="22">ಈ ನಾಲ್ಕು ಮಂದಿಯು ಗತ್ ಊರಿನಲ್ಲಿದ್ದ ರೆಫಾಯರ ವಂಶಜರು. ಇವರು ದಾವೀದನಿಂದಲೂ ಅವನ ಜನರಿಂದಲೂ ಸಂಹಾರವಾಗಿ ಹೋದರು.</verse>
			</chapter>
			<chapter number="22">
				<verse number="1">ಯೆಹೋವ ದೇವರು ದಾವೀದನನ್ನು ಅವನ ಎಲ್ಲಾ ಶತ್ರುಗಳಿಂದಲೂ, ಸೌಲನ ಕೈಯಿಂದಲೂ ತಪ್ಪಿಸಿಕೊಂಡಾಗ ಯೆಹೋವ ದೇವರಿಗೆ ಈ ಪದ್ಯವನ್ನು ಹಾಡಿದ್ದು.</verse>
				<verse number="2">ಅವನು ಹೇಳಿದನು: “ಯೆಹೋವ ದೇವರು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕರೂ ಆಗಿದ್ದಾರೆ,</verse>
				<verse number="3">ನನ್ನ ಬಂಡೆಯಾದ ದೇವರಲ್ಲಿ, ನಾನು ಭರವಸವಿಡುವೆನು; ಅವರು ನನ್ನ ಗುರಾಣಿ ಮತ್ತು ನನ್ನ ರಕ್ಷಣೆಯ ಕೊಂಬು, ಅವರು ನನ್ನ ಉನ್ನತವಾದ ದುರ್ಗವೂ, ನನ್ನ ಆಶ್ರಯವೂ, ಬಲಾತ್ಕಾರಿಯಿಂದ ನನ್ನನ್ನು ರಕ್ಷಿಸುವವರೂ ಅವರೇ ಆಗಿದ್ದಾರೆ.</verse>
				<verse number="4">“ಸ್ತುತಿ ಪಾತ್ರರಾಗಿರುವ ಯೆಹೋವ ದೇವರನ್ನು ನಾನು ಮೊರೆಯಿಟ್ಟದ್ದರಿಂದ, ಅವರು ನನ್ನ ಶತ್ರುಗಳಿಂದ ನನ್ನನ್ನು ಕಾಪಾಡಿದ್ದಾರೆ.</verse>
				<verse number="5">ಮರಣದಲೆಗಳು ನನ್ನನ್ನು ಆವರಿಸಿಕೊಂಡವು. ವಿನಾಶಪ್ರವಾಹಗಳು ನನ್ನ ಮೇಲೆ ಹರಿದವು;</verse>
				<verse number="6">ಪಾತಾಳದ ಪಾಶಗಳು ನನ್ನನ್ನು ಸುತ್ತಿಕೊಂಡವು; ಮರಣದ ಬಲೆಗಳು ನನ್ನನ್ನು ಎದುರಿಸಿದವು.</verse>
				<verse number="7">“ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಕರೆದೆನು; ನನ್ನ ದೇವರಿಗೆ ಮೊರೆಯಿಟ್ಟೆನು. ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು; ನನ್ನ ಮೊರೆಯು ಅವರ ಕಿವಿಗೆ ಮುಟ್ಟಿತು.</verse>
				<verse number="8">ಆಗ ದೇವರು ಬೇಸರಗೊಂಡಿದ್ದರಿಂದ ಭೂಮಿಯು ನಡುಗಿ ಕದಲಿದವು, ಆಕಾಶಗಳ ಅಸ್ತಿವಾರಗಳು ಸಹ ಕದಲಿದವು.</verse>
				<verse number="9">ಮೂಗಿನಿಂದ ಹೊಗೆ ಬಂದಂತೆಯೂ, ಬಾಯಿಯೊಳಗಿಂದ ದಹಿಸುವ ಅಗ್ನಿ ಹೊರಟಂತೆಯೂ; ಕೆಂಡಗಳು ಅದರಿಂದ ಜ್ವಾಲಿಸಿದಂತೆಯೂ ಇತ್ತು.</verse>
				<verse number="10">ದೇವರು ಆಕಾಶಗಳನ್ನು ಬಾಗಿಸಿ ಕೆಳಗಿಳಿದು ಬಂದರು; ಅವರ ಪಾದಗಳ ಕೆಳಗೆ ಕಾರ್ಮೋಡಗಳಿದ್ದವು;</verse>
				<verse number="11">ಅವರು ಕೆರೂಬಿಯ ಮೇಲೆ ಕೂತು ಹಾರಿದರು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿಕೊಂಡರು.</verse>
				<verse number="12">ಕತ್ತಲನ್ನೂ, ಮಳೆ ತರುವ ಆಕಾಶದ ಕಾರ್ಮೋಡಗಳನ್ನೂ ತಮ್ಮ ಸುತ್ತಲೂ ಹೊದಿಕೆಯನ್ನಾಗಿ ಮಾಡಿಕೊಂಡರು.</verse>
				<verse number="13">ಅವರ ಸನ್ನಿಧಿಯ ಪ್ರಕಾಶದಿಂದ ಮಿಂಚಿನ ಜ್ವಾಲೆಗಳು ಹೊರಹೊಮ್ಮಿದವು.</verse>
				<verse number="14">ಯೆಹೋವ ದೇವರು ಆಕಾಶಗಳಲ್ಲಿ ಗುಡುಗಿದರು. ಮಹೋನ್ನತ ದೇವರ ಧ್ವನಿಯು ಕಲ್ಮಳೆ ಹಾಗೂ ಮಿಂಚುಗಳಿಂದ ಪ್ರತಿಧ್ವನಿಸಿತು.</verse>
				<verse number="15">ಅವರು ತಮ್ಮ ಬಾಣಗಳನ್ನು ಎಸೆದು ವೈರಿಗಳನ್ನು ಚದರಿಸಿದರು, ಸಿಡಿಲಿನಿಂದ ವೈರಿಗಳನ್ನೆಲ್ಲ ಅಟ್ಟಿಸಿಬಿಟ್ಟರು.</verse>
				<verse number="16">ಆಗ ಯೆಹೋವ ದೇವರ ಗದರಿಕೆಯಿಂದಲೂ, ಅವರ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ತಳವು ಕಾಣಿಸಿತು. ಭೂಲೋಕದ ಅಸ್ತಿವಾರಗಳು ಬಯಲಾದವು.</verse>
				<verse number="17">“ಅವರು ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು, ಅಗಾಧವಾದ ಜಲರಾಶಿಗಳಿಂದ ಹೊರಗೆಳೆದರು.</verse>
				<verse number="18">ಅವರು ನನಗಿಂತ ಶಕ್ತಿಶಾಲಿಯಾದ ಶತ್ರುಗಳಿಂದ, ದ್ವೇಷಿಸುತ್ತಿದ್ದ ವೈರಿಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದರು.</verse>
				<verse number="19">ನನ್ನ ಆಪತ್ತಿನ ದಿನದಲ್ಲಿ ನನ್ನನ್ನು ಆ ಶತ್ರುಗಳು ದಾಳಿಮಾಡಿದರು; ಆದರೆ ಯೆಹೋವ ದೇವರು ನನಗೆ ಆಧಾರವಾಗಿದ್ದರು.</verse>
				<verse number="20">ಅವರು ನನ್ನನ್ನು ಹೊರಗೆ ವಿಶಾಲ ಸ್ಥಳಕ್ಕೆ ತಂದರು; ನನ್ನಲ್ಲಿ ಸಂತೋಷಪಟ್ಟದ್ದರಿಂದ ನನ್ನನ್ನು ಕಾಪಾಡಿದರು.</verse>
				<verse number="21">“ಯೆಹೋವ ದೇವರು ನನ್ನ ನೀತಿಯ ಪ್ರಕಾರ ನನ್ನೊಂದಿಗೆ ವ್ಯವಹರಿಸಿದರು; ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಪ್ರತಿಫಲಕೊಟ್ಟರು.</verse>
				<verse number="22">ಏಕೆಂದರೆ ನಾನು ಯೆಹೋವ ದೇವರ ಮಾರ್ಗಗಳನ್ನು ಅನುಸರಿಸಿದ್ದೇನೆ, ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.</verse>
				<verse number="23">ಅವರ ಆಜ್ಞೆಗಳೆಲ್ಲಾ ನನ್ನ ಮುಂದೆ ಇಟ್ಟುಕೊಂಡೆನು; ದೇವರ ತೀರ್ಪುಗಳಿಂದ ನಾನು ತೊಲಗಿಹೋಗಲಿಲ್ಲ.</verse>
				<verse number="24">ನಾನು ಅವರ ದೃಷ್ಟಿಯಲ್ಲಿ ನಿರ್ದೋಷಿಯು, ನಾನು ಪಾಪದಿಂದ ನನ್ನನ್ನು ಕಾಪಾಡಿಕೊಂಡೆನು.</verse>
				<verse number="25">ಆದ್ದರಿಂದ ಯೆಹೋವ ದೇವರು ನನ್ನ ನೀತಿಯ ಪ್ರಕಾರವೂ, ಅವರ ದೃಷ್ಟಿಯಲ್ಲಿ ನನ್ನ ಶುದ್ಧತ್ವದ ಪ್ರಕಾರವೂ ನನಗೆ ಪ್ರತಿಫಲಕೊಟ್ಟರು.</verse>
				<verse number="26">“ದಯವಂತರಿಗೆ ನೀವು ನಿಮ್ಮನ್ನು ದಯವಂತರಾಗಿ ತೋರಿಸುತ್ತೀರಿ; ನಿರ್ದೋಷಿಗೆ ನೀವು ನಿರ್ದೋಷಿಯಾಗಿ ತೋರಿಸುತ್ತೀರಿ.</verse>
				<verse number="27">ಶುದ್ಧರಿಗೆ ನೀವು ಶುದ್ಧರಾಗಿ ತೋರಿಸುತ್ತೀರಿ, ವಕ್ರ ವ್ಯಕ್ತಿಗೆ ನಿಮ್ಮ ಬುದ್ಧಿವಂತಿಕೆಯನ್ನು ತೋರಿಸುತ್ತೀರಿ.</verse>
				<verse number="28">ದೀನರನ್ನು ರಕ್ಷಿಸುತ್ತೀರಿ; ಆದರೆ ನೀವು ಗರ್ವಿಷ್ಠರನ್ನು ತಗ್ಗಿಸಲು ನಿಮ್ಮ ಕಣ್ಣುಗಳು ಅವರ ಮೇಲೆ ಇರುತ್ತವೆ.</verse>
				<verse number="29">ಯೆಹೋವ ದೇವರೇ, ನನ್ನ ದೀಪವು ನೀವೇ; ಯೆಹೋವ ದೇವರು ನನ್ನ ಕತ್ತಲೆಯನ್ನು ಬೆಳಕನ್ನಾಗಿ ಮಾರ್ಪಡಿಸುವರು.</verse>
				<verse number="30">ನಿಮ್ಮ ಸಹಾಯದಿಂದ ವೈರಿಸೇನೆಯ ವಿರುದ್ಧ ಹೋಗುವೆನು. ನನ್ನ ದೇವರೊಂದಿಗೆ ಕೋಟೆಗೋಡೆಯನ್ನೂ ಹಾರುವೆನು.</verse>
				<verse number="31">“ದೇವರ ಮಾರ್ಗವು ಪರಿಪೂರ್ಣವಾದದ್ದು; ಯೆಹೋವ ದೇವರ ವಾಕ್ಯವು ದೋಷವಿಲ್ಲದ್ದು; ತಮ್ಮಲ್ಲಿ ಆಶ್ರಯ ಹೊಂದಿದ ಎಲ್ಲರಿಗೂ ಅವರು ಗುರಾಣಿಯಾಗಿದ್ದಾರೆ.</verse>
				<verse number="32">ಏಕೆಂದರೆ ಯೆಹೋವ ದೇವರಲ್ಲದೆ ಬೇರೆ ದೇವರು ಯಾರು? ಮತ್ತು ನಮ್ಮ ದೇವರನ್ನು ಹೊರತುಪಡಿಸಿ ಬಂಡೆ ಯಾರು?</verse>
				<verse number="33">ಬಲದಿಂದ ನನಗೆ ಆಯುಧವನ್ನು ಧರಿಸುವಂತೆ ಮಾಡಿ; ನನ್ನ ಮಾರ್ಗವನ್ನು ಸುರಕ್ಷಿತಗೊಳಿಸುವ ದೇವರು ಅವರೇ.</verse>
				<verse number="34">ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಚುರುಕು ಮಾಡಿ, ಅವರು ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾರೆ.</verse>
				<verse number="35">ಅವರು ಯುದ್ಧಕ್ಕಾಗಿ ನನ್ನ ಕೈಗಳಿಗೆ ತರಬೇತುಕೊಟ್ಟು. ನನ್ನ ಭುಜದಿಂದ ಕಂಚಿನ ಬಿಲ್ಲನ್ನು ಬಗ್ಗಿಸುವಂತೆ ಮಾಡುತ್ತಾರೆ.</verse>
				<verse number="36">ನಿಮ್ಮ ರಕ್ಷಣೆಯ ಸಹಾಯವನ್ನು ನನಗೆ ಗುರಾಣಿಯನ್ನಾಗಿ ಮಾಡಿದ್ದೀರಿ, ನಿಮ್ಮ ಸಹಾಯವು ನನ್ನನ್ನು ಘನವಂತನನ್ನಾಗಿ ಮಾಡಿದೆ.</verse>
				<verse number="37">ನೀವು ನನ್ನ ಕಾಲಡಿಗಳಿಗೆ ವಿಶಾಲಸ್ಥಳ ಒದಗಿಸಿದ್ದೀರಿ, ಆದುದರಿಂದ ನನ್ನ ಹಿಮ್ಮಡಿಗಳು ಜಾರುವುದಿಲ್ಲ.</verse>
				<verse number="38">“ನನ್ನ ಶತ್ರುಗಳನ್ನು ಹಿಂದಟ್ಟಿ ಅವರನ್ನು ನಾಶಮಾಡಿದೆನು. ಅವರನ್ನು ಸಂಹರಿಸಿಬಿಡುವವರೆಗೂ ನಾನು ಹಿಂದಿರುಗಲಿಲ್ಲ.</verse>
				<verse number="39">ಏಳಲಾರದಂತೆ ಅವರನ್ನು ಸಂಪೂರ್ಣವಾಗಿ ತುಳಿದುಬಿಟ್ಟೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದರು.</verse>
				<verse number="40">ನೀವು ಯುದ್ಧಕ್ಕಾಗಿ ನನಗೆ ಬಲವನ್ನು ಆಯುಧವನ್ನಾಗಿ ನೀಡಿ; ನನ್ನ ಎದುರಾಳಿಗಳನ್ನು ನನಗೆ ಅಧೀನ ಮಾಡಿದ್ದೀರಿ.</verse>
				<verse number="41">ನನ್ನ ಶತ್ರುಗಳು ನನಗೆ ಬೆನ್ನುಮಾಡಿ ಓಡಿಹೋಗುವಂತೆ ಮಾಡಿದಿರಿ; ನಾನು ನನ್ನ ವೈರಿಗಳನ್ನು ಸಂಹರಿಸಿದೆನು.</verse>
				<verse number="42">ಅವರು ಸಹಾಯಕ್ಕಾಗಿ ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇರಲಿಲ್ಲ; ಯೆಹೋವ ದೇವರಿಗೂ ಮೊರೆಯಿಟ್ಟರು, ಆದರೆ ಅವರೂ ಉತ್ತರ ಕೊಡಲಿಲ್ಲ.</verse>
				<verse number="43">ನಾನು ಅವರನ್ನು ನೆಲದ ಧೂಳಿನಂತೆ ಪುಡಿಪುಡಿ ಮಾಡಿದೆನು; ಬೀದಿಯಲ್ಲಿನ ಕೆಸರು ಎಂಬಂತೆ ತುಳಿದು ಎಸೆದುಬಿಟ್ಟೆನು.</verse>
				<verse number="44">“ನೀವು ನನ್ನ ಜನರ ಒಳಕಲಹದಿಂದ ನನ್ನನ್ನು ತಪ್ಪಿಸಿದ್ದೀರಿ, ನನ್ನನ್ನು ಜನಾಂಗಗಳಿಗೆ ನಾಯಕನನ್ನಾಗಿ ಉಳಿಸಿದ್ದೀ; ನಾನು ಅರಿಯದ ಜನರು ನನಗೆ ವಿಧೇಯರಾಗುವರು.</verse>
				<verse number="45">ವಿದೇಶಿಯರು ನನಗೆ ಅಧೀನರಾದರು; ನನ್ನ ಸುದ್ದಿ ಕೇಳಿದ ಕೂಡಲೇ ನನಗೆ ವಿಧೇಯರಾಗುವರು.</verse>
				<verse number="46">ಅವರು ಭಯಗೊಳ್ಳುವರು; ನಡುಗುತ್ತಾ ತಮ್ಮ ಕೋಟೆಗಳಿಂದ ಹೊರಬರುವರು.</verse>
				<verse number="47">“ಯೆಹೋವ ದೇವರು ಜೀವಿಸುವ ದೇವರು! ನನ್ನ ಆಶ್ರಯವಾಗಿರುವ ದೇವರಿಗೆ ಸ್ತೋತ್ರ. ನನ್ನ ಬಂಡೆಯು, ನನ್ನ ರಕ್ಷಕರಾದ ದೇವರು ಮಹಿಮೆ ಹೊಂದಲಿ.</verse>
				<verse number="48">ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುವವರೂ ಜನರನ್ನು ನನಗೆ ಅಧೀನಪಡಿಸುವವರೂ ಆಗಿದ್ದಾರೆ.</verse>
				<verse number="49">ಅವರು ನನ್ನ ಶತ್ರುಗಳಿಂದ ನನ್ನನ್ನು ಬಿಡಿಸುತ್ತಾರೆ. ನೀವು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀರಿ. ಬಲಾತ್ಕಾರ ಮಾಡುವವನಿಂದ ನನ್ನನ್ನು ರಕ್ಷಿಸುತ್ತೀರಿ.</verse>
				<verse number="50">ಆದ್ದರಿಂದ ಯೆಹೋವ ದೇವರೇ, ನಾನು ಜನಾಂಗಗಳಲ್ಲಿ ನಿಮ್ಮನ್ನು ಕೊಂಡಾಡುವೆನು. ನಿಮ್ಮನ್ನು ಕೊಂಡಾಡಿ ನಿಮ್ಮ ಹೆಸರನ್ನು ಕೀರ್ತಿಸುವೆನು.</verse>
				<verse number="51">“ಅವರು ತಮ್ಮ ಅರಸನಿಗೆ ವಿಶೇಷ ರಕ್ಷಣೆಯನ್ನು ಕೊಡುವರು; ತಮ್ಮ ಅಭಿಷಿಕ್ತನಿಗೂ, ದಾವೀದನಿಗೂ, ಅವನ ಸಂತತಿಯವರಿಗೂ ದಯೆಯನ್ನು ಯುಗಯುಗಕ್ಕೂ ಅನುಗ್ರಹಿಸುವರು.”</verse>
			</chapter>
			<chapter number="23">
				<verse number="1">ದಾವೀದನ ಕಡೆಯ ಮಾತುಗಳು: “ಇಷಯನ ಮಗ ದಾವೀದನ ನುಡಿಗಳಿವು: ಉನ್ನತವಾಗಿ ಸಾಗಿದ ಪುರುಷನು ಯಾಕೋಬನ ದೇವರಿಂದ ಅಭಿಷಿಕ್ತನಾದವನು, ಇಸ್ರಾಯೇಲಿನ ರಮ್ಯವಾದ ಕೀರ್ತನೆಗಾರನು ನುಡಿದದ್ದೇನೆಂದರೆ:</verse>
				<verse number="2">“ಯೆಹೋವ ದೇವರ ಆತ್ಮರು ನನ್ನ ಮೂಲಕ ಮಾತನಾಡಿದರು; ಅವರ ನುಡಿ ನನ್ನ ಬಾಯಲ್ಲಿ ಇತ್ತು.</verse>
				<verse number="3">ಇಸ್ರಾಯೇಲಿನ ದೇವರೂ, ಇಸ್ರಾಯೇಲಿನ ಬಂಡೆಯಾದವರೂ ನನಗೆ ಮಾತನಾಡಿದ್ದು: ‘ಮನುಷ್ಯರ ಮೇಲೆ ನೀತಿಯಿಂದ ಆಳುವವನು, ದೇವರ ಭಯದಿಂದ ಆಳುವವನು.</verse>
				<verse number="4">ಮೋಡವಿಲ್ಲದ ಮುಂಜಾನೆ ಸೂರ್ಯೋದಯದ ಸಮಯದಲ್ಲಿಯ ಉದಯದ ಬೆಳಕಿನಂತಿರುವನು. ಭೂಮಿಯಿಂದ ಹುಲ್ಲು ಮೊಳೆಯಿಸುವ ಮಳೆಯ ನಂತರದ ಪ್ರಕಾಶದಂತಿರುವನು.’</verse>
				<verse number="5">“ನನ್ನ ಮನೆ ದೇವರೊಂದಿಗೆ ಸರಿಯಾಗಿರದಿದ್ದರೆ, ನಿಶ್ಚಯವಾಗಿಯೂ ಅವರು ನನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಿರಲಿಲ್ಲ, ಪ್ರತಿಯೊಂದು ವಿಭಾಗದಲ್ಲಿಯೂ ವ್ಯವಸ್ಥೆಗೊಳಿಸಲಾಗಿದೆ ಮತ್ತು ಭದ್ರಪಡಿಸಲಾಗಿದೆ. ದೇವರು ನಿಶ್ಚಯವಾಗಿಯೂ ನನ್ನ ರಕ್ಷಣೆಯನ್ನು ಪೂರ್ತಿಗೊಳಿಸುವುದಿಲ್ಲ. ದೇವರು ನನ್ನ ಎಲ್ಲಾ ಅಪೇಕ್ಷೆಗಳನ್ನು ಪೂರೈಸುವುದಿಲ್ಲ.</verse>
				<verse number="6">ಆದರೆ ದುಷ್ಟಜನರೆಲ್ಲರು ಕೈಗಳಿಂದ ಕೂಡಿಸದೆ, ಎಸೆದುಬಿಡುವ ಮುಳ್ಳಿನಂತೆ ಇದ್ದಾರೆ.</verse>
				<verse number="7">ಮುಳ್ಳುಗಳನ್ನು ಮುಟ್ಟುವವರು ಕಬ್ಬಿಣದ ಆಯುಧ ಉಪಯೋಗಿಸುವರು, ಇಲ್ಲವೆ ಈಟಿಯ ಮೊನೆಯನ್ನು ಉಪಯೋಗಿಸುವರು. ಅವು ಬೀಳುವ ಸ್ಥಳದಲ್ಲಿ ಸುಟ್ಟುಹೋಗುವುವು.”</verse>
				<verse number="8">ದಾವೀದನ ಪರಾಕ್ರಮಶಾಲಿಗಳ ಹೆಸರುಗಳು ಇವೇ: ಮೂರು ಜನ ಮುಖ್ಯಸ್ಥರಲ್ಲಿ ಒಬ್ಬನು ತಹ್ಕೆಮೋನ್ಯನಾದ ಯೋಷೆಬ್ ಬಷ್ಷೆಬೆತ ಎಂಬವನು; ಇವನು ತನ್ನ ಈಟಿಯಿಂದ ಎಂಟುನೂರು ಮಂದಿಗೆ ವಿರೋಧವಾಗಿ ಹೋರಾಡಿ ಅವರನ್ನು ಒಂದೇ ಕಾಳಗದಲ್ಲಿ ಕೊಂದುಹಾಕಿದನು.</verse>
				<verse number="9">ಇವನ ತರುವಾಯ ಅಹೋಹ್ಯನಾಗಿರುವ ದೋದೋ ಎಂಬವನ ಮಗನಾಗಿರುವ ಎಲಿಯಾಜರನು; ಇವನು ಇಸ್ರಾಯೇಲ್ ಜನರು ಓಡಿ ಹೋದ ತರುವಾಯ ಯುದ್ಧಕ್ಕೆ ಕೂಡಿಬಂದ ಫಿಲಿಷ್ಟಿಯರನ್ನು ನಿಂದಿಸಿದ ದಾವೀದನ ಸಂಗಡ ಇದ್ದ ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.</verse>
				<verse number="10">ಎಲಿಯಾಜರನು ಎದ್ದು ಖಡ್ಗ ಹಿಡಿದ ತನ್ನ ಕೈ ದಣಿದು ಮರಗಟ್ಟಿ ಹೋಗುವವರೆಗೂ ಫಿಲಿಷ್ಟಿಯರನ್ನು ಸಂಹರಿಸುತ್ತಿದ್ದನು. ಆ ದಿನ ಯೆಹೋವ ದೇವರು ದೊಡ್ಡ ರಕ್ಷಣೆಯನ್ನು ಉಂಟುಮಾಡಿದರು. ಸೈನಿಕರು ಸುಲಿದುಕೊಳ್ಳುವುದಕ್ಕೆ ಮಾತ್ರ ಅವನ ಹಿಂದೆ ಹಿಂದಿರುಗಿದರು.</verse>
				<verse number="11">ಇವನ ತರುವಾಯ ಹರಾರ್ಯನಾದ ಆಗೇಯನ ಮಗನಾದ ಶಮ್ಮನು; ಅಲಸಂದಿಯಿಂದ ತುಂಬಿರುವ ಹೊಲದಲ್ಲಿ ಫಿಲಿಷ್ಟಿಯರು ದಂಡಾಗಿ ಕೂಡಿಬಂದಾಗ, ಇಸ್ರಾಯೇಲ್ ಸೈನ್ಯದವರು ಫಿಲಿಷ್ಟಿಯರ ಎದುರಿನಿಂದ ಓಡಿಹೋದರು.</verse>
				<verse number="12">ಆದರೆ ಅವನು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದುಹಾಕಿ ಹೊಲವನ್ನು ಕಾಪಾಡಿದನು, ಹೀಗೆ ಯೆಹೋವ ದೇವರು ಮಹಾಜಯವನ್ನು ಉಂಟುಮಾಡಿದರು.</verse>
				<verse number="13">ಮೂವತ್ತು ಮಂದಿ ಪರಾಕ್ರಮಶಾಲಿಗಳ ಮುಖ್ಯಸ್ಥರಲ್ಲಿ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿತ್ತು.</verse>
				<verse number="14">ದಾವೀದನು ಕೋಟೆ ಸ್ಥಳದಲ್ಲಿ ಇದ್ದನು, ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.</verse>
				<verse number="15">ಆಗ ದಾವೀದನು, “ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವವನ್ಯಾರು,” ಎಂದು ಬಹು ಆಶೆಯಿಂದ ಹೇಳಿದನು.</verse>
				<verse number="16">ಆಗ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತೆಗೆದುಕೊಂಡು ಬಂದರು. ಆದರೆ ಅದನ್ನು ಅವನು ಕುಡಿಯದೇ ಯೆಹೋವ ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು.</verse>
				<verse number="17">ಅವನು, “ಯೆಹೋವ ದೇವರೇ, ನಾನು ಇಂಥಾ ಕಾರ್ಯವನ್ನು ಎಂದಿಗೂ ಮಾಡಲು ಸಾಧ್ಯವಿಲ್ಲ. ಇದು ತಮ್ಮ ಪ್ರಾಣದಾಶೆ ತೊರೆದ ಮನುಷ್ಯರ ರಕ್ತವಲ್ಲವೇ?” ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇಂಥಾ ಮಹಾಕಾರ್ಯಗಳನ್ನು ಈ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.</verse>
				<verse number="18">ಯೋವಾಬನ ಸಹೋದರ ಚೆರೂಯಳ ಮಗ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು.</verse>
				<verse number="19">ಈ ಮೂವರಲ್ಲಿ ಅವನು ಇಬ್ಬರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು, ಆದ್ದರಿಂದ ಅವನು ಅವರಲ್ಲಿ ಪ್ರಧಾನನಾದನು. ಆದರೂ ಆ ಮೊದಲಿನ ಮೂರು ಜನರಿಗೆ ಅವನು ಸಮಾನನಾಗಿರಲಿಲ್ಲ.</verse>
				<verse number="20">ಕಬ್ಜಯೇಲನ ಪರಾಕ್ರಮಶಾಲಿಯ ಮೊಮ್ಮಗನೂ ಯೆಹೋಯಾದಾವನ ಮಗನೂ ಆದ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದನು. ಅವನು ಬಲಶಾಲಿಯಾದ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.</verse>
				<verse number="21">ಅವನು ಬಲಿಷ್ಠನಾದ ಒಬ್ಬ ಈಜಿಪ್ಟಿನವನನ್ನು ಹೊಡೆದುಬಿಟ್ಟನು. ಆ ಈಜಿಪ್ಟಿನವನ ಕೈಯಲ್ಲಿ ದಪ್ಪವಾದ ಒಂದು ಈಟಿ ಇದ್ದರೂ, ತಾನು ಒಂದು ಕೋಲು ಹಿಡಿದುಕೊಂಡು ಅವನ ಬಳಿಗೆ ಹೋಗಿ ಈಜಿಪ್ಟಿನವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು, ಅವನ ಈಟಿಯಿಂದಲೇ ಅವನನ್ನು ಕೊಂದುಹಾಕಿದನು.</verse>
				<verse number="22">ಇವುಗಳನ್ನು ಯೆಹೋಯಾದಾವನ ಮಗ ಬೆನಾಯನು ಮಾಡಿದ್ದರಿಂದ, ಮೂರು ಮಂದಿ ಪರಾಕ್ರಮಶಾಲಿಗಳಂತೆಯೇ ಹೆಸರುಗೊಂಡನು.</verse>
				<verse number="23">ಇವನು ಮೂವತ್ತು ಜನರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು. ಆದರೆ ಆ ಮೊದಲಿನ ಮೂರು ಮಂದಿಯಲ್ಲಿ ಅವನನ್ನು ಸೇರಿಸಲಾಗಲಿಲ್ಲ. ದಾವೀದನು ಅವನನ್ನು ತನ್ನ ಮೈಗಾವಲಿನವರ ಮೇಲೆ ಯಜಮಾನನನ್ನಾಗಿ ಇಟ್ಟನು.</verse>
				<verse number="24">ಈ ಮೂವತ್ತು ಮಂದಿ ಯಾರೆಂದರೆ: ಯೋವಾಬನ ಸಹೋದರನಾದ ಅಸಾಯೇಲನು, ಬೇತ್ಲೆಹೇಮ್ ಊರಿನ ದೋದೋವಿನ ಮಗ ಎಲ್ಹನಾನನು;</verse>
				<verse number="25">ಹರೋದಿನವನಾದ ಶಮ್ಮನು; ಹರೋದಿನವನಾದ ಎಲೀಕನು;</verse>
				<verse number="26">ಪೆಲೆಟಿನವನಾದ ಹೆಲೆಚನು; ತೆಕೋವದ ಇಕ್ಕೇಷನ ಮಗನಾದ ಈರನು;</verse>
				<verse number="27">ಅನಾತೋತಿನವನಾದ ಅಬೀಯೆಜೆರನು; ಹುಷಾ ಊರಿನವನಾದ ಮೆಬುನೈ,</verse>
				<verse number="28">ಅಹೋಹ್ಯನಾದ ಚಲ್ಮೋನನು; ನೆಟೋಫದವನಾದ ಮಹರೈ;</verse>
				<verse number="29">ನೆಟೋಫದವನಾದ ಬಾಣನ ಮಗ ಹೆಲೇಬ್, ಬೆನ್ಯಾಮೀನ್ಯರಿಗೆ ಸೇರಿದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಇತ್ತೈ;</verse>
				<verse number="30">ಪಿರಾತೋನ್ಯನಾದ ಬೆನಾಯನು; ಹೊಳೆಗಳುಳ್ಳ ಗಾಷ್ ಊರಿನವನಾದ ಹಿದ್ದೈ;</verse>
				<verse number="31">ಅರಾಬಾ ತಗ್ಗಿನವನಾದ ಅಬೀ ಅಲ್ಬೋನನು; ಬಹರೂಮ್ಯನಾದ ಅಜ್ಮಾವೆತನು;</verse>
				<verse number="32">ಶಾಲ್ಬೋನ್ಯನಾದ ಎಲೆಯಖ್ಬಾನು; ಯಾಷೇನನ ಪುತ್ರರಲ್ಲಿ ಒಬ್ಬನು ಯೋನಾತಾನನು;</verse>
				<verse number="33">ಹರಾರ್ಯನಾದ ಶಮ್ಮನು; ಹರಾರ್ಯನಾದ ಶಾರಾರನ ಮಗ ಅಹೀಯಾಮ್;</verse>
				<verse number="34">ಮಾಕಾ ಊರಿನ ಅಹಸ್ಬೈ ಎಂಬುವನ ಮಗನಾದ ಎಲೀಫೆಲೆಟನು; ಗಿಲೋವಿನ ಅಹೀತೋಫೆಲ್ ಎಂಬವನ ಮಗ ಎಲೀಯಾಮ್;</verse>
				<verse number="35">ಕರ್ಮೇಲ್ಯನಾದ ಹೆಚ್ರೋ; ಅರ್ಬಿಯನಾದ ಪಾರೈ;</verse>
				<verse number="36">ಹಗ್ರೀಯನ ಮಗನಾದ ಚೋಬ ಊರಿನವನಾದ ನಾತಾನನ ಮಗ ಇಗಾಲನು, ಗಾದ್ಯನಾದ ಬಾನೀ.</verse>
				<verse number="37">ಅಮ್ಮೋನಿಯನಾದ ಚೆಲೆಕನು; ಚೆರೂಯಳ ಮಗನಾದ ಯೋವಾಬನ ಆಯುಧವಾಹಕನು ಆಗಿದ್ದ ಬೇರೋತ್ಯನಾದ ನಹರೈ;</verse>
				<verse number="38">ಯೆತೆರಿಯನಾದ ಈರನು; ಯೆತೆರಿಯನಾದ ಗಾರೇಬನು;</verse>
				<verse number="39">ಹಿತ್ತಿಯನಾದ ಊರೀಯನು. ಹೀಗೆ ಇವರು ಸೇರಿ ಒಟ್ಟು ಮೂವತ್ತೇಳು ಮಂದಿ ರಣಧೀರರಿದ್ದರು.</verse>
			</chapter>
			<chapter number="24">
				<verse number="1">ಯೆಹೋವ ದೇವರ ಕೋಪವು ತಿರುಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು. ಆಗ ದೇವರು, “ಯೆಹೂದ ಮತ್ತು ಇಸ್ರಾಯೇಲರ ಜನಗಣತಿ ಮಾಡು,” ಎಂದು ದಾವೀದನನ್ನು ಪ್ರೇರೇಪಿಸಿದರು.</verse>
				<verse number="2">ಅರಸನು ಸೈನ್ಯಾಧಿಪತಿಯಾದ ಯೋವಾಬನಿಗೆ, “ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ, ನೀನು ದಾನಿನಿಂದ ಬೇರ್ಷೆಬದವರೆಗೂ ಇರುವ ಇಸ್ರಾಯೇಲ್ ಸಮಸ್ತ ಗೋತ್ರಗಳಲ್ಲಿ ಹೋಗಿ, ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದನು.</verse>
				<verse number="3">ಆಗ ಯೋವಾಬನು ಅರಸನಿಗೆ, “ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ಕಾಣುವ ಹಾಗೆ ನಿನ್ನ ದೇವರಾದ ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ; ಆದರೆ ನನ್ನ ಒಡೆಯನಾದ ಅರಸನು ಈ ಕಾರ್ಯವನ್ನು ಮಾಡಲು ಅಪೇಕ್ಷಿಸುವುದು ಏಕೆ?” ಎಂದನು.</verse>
				<verse number="4">ಆದಾಗ್ಯೂ ಅರಸನ ಮಾತೇ ಯೋವಾಬನಿಗೆ ವಿರೋಧವಾಗಿ ಗೆದ್ದಿತು. ಆದ್ದರಿಂದ ಯೋವಾಬನೂ, ಸೈನ್ಯಾಧಿಪತಿಗಳೂ ಇಸ್ರಾಯೇಲರಲ್ಲಿ ಯುದ್ಧಮಾಡಲು ಶಕ್ತರಾದ ಜನರನ್ನು ಲೆಕ್ಕಿಸಲು ಅರಸನ ಸಮ್ಮುಖದಿಂದ ಹೊರಟು ಹೋದರು.</verse>
				<verse number="5">ಅವರು ಯೊರ್ದನನ್ನು ದಾಟಿ, ಗಾದ್ ತಗ್ಗಿನಲ್ಲಿರುವ ಪಟ್ಟಣ ಹತ್ತಿರವಿರುವ ಅರೋಯೇರಿನಲ್ಲಿ ಇಳಿದು ಅಲ್ಲಿಂದ ಯಜ್ಜೇರಿಗೆ ಹೋದರು.</verse>
				<verse number="6">ಅಲ್ಲಿಂದ ಗಿಲ್ಯಾದಿಗೂ, ತಖ್ತೀಮ್ ಹೊಜೀ ಪ್ರದೇಶಕ್ಕೂ, ಅಲ್ಲಿಂದ ದಾನ್ ಯಾನಿಗೂ, ಅಲ್ಲಿಂದ ಸುತ್ತಿಕೊಂಡು ಸೀದೋನಿಗೂ ಬಂದರು.</verse>
				<verse number="7">ಅವರು ಟೈರಿನ ಭದ್ರಸ್ಥಳಕ್ಕೂ, ಹಿವ್ವಿಯರ, ಕಾನಾನ್ಯರ ಸಕಲ ಪಟ್ಟಣಗಳಿಗೂ, ಅಲ್ಲಿಂದ ಯೆಹೂದದ ದಕ್ಷಿಣಕ್ಕೂ, ಬೇರ್ಷೆಬಕ್ಕೂ ಬಂದರು.</verse>
				<verse number="8">ಹೀಗೆಯೇ ಅವರು ಸಮಸ್ತ ದೇಶಕ್ಕೆ ಹೋಗಿ, ಒಂಬತ್ತು ತಿಂಗಳು ಇಪ್ಪತ್ತು ದಿವಸವಾದ ತರುವಾಯ ಯೆರೂಸಲೇಮಿಗೆ ಬಂದರು.</verse>
				<verse number="9">ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನೆಂದರೆ: ಇಸ್ರಾಯೇಲರಲ್ಲಿ ಖಡ್ಗ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷಮಂದಿ ಇದ್ದರು.</verse>
				<verse number="10">ದಾವೀದನು ಜನರನ್ನು ಲೆಕ್ಕಿಸಿದ ತರುವಾಯ ಅವನ ಮನಸ್ಸಾಕ್ಷಿ ಹಂಗಿಸತೊಡಗಿತು. ಆದ್ದರಿಂದ ದಾವೀದನು ಯೆಹೋವ ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ ಮಹಾಪಾಪ ಮಾಡಿದೆನು. ಯೆಹೋವ ದೇವರೇ, ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ; ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು.</verse>
				<verse number="11">ದಾವೀದನು ಉದಯದಲ್ಲಿ ಎದ್ದಾಗ ಅವನ ದರ್ಶಿಯಾದ ಗಾದನೆಂಬ ಪ್ರವಾದಿಗೆ ಯೆಹೋವ ದೇವರ ವಾಕ್ಯ ಬಂದು ಅವನಿಗೆ,</verse>
				<verse number="12">“ನೀನು ದಾವೀದನ ಬಳಿಗೆ ಹೋಗಿ, ಅವನ ಸಂಗಡ ಮಾತಾಡಿ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನಗೆ ವಿರೋಧವಾಗಿ ಬರಮಾಡಬೇಕೋ ಅದನ್ನು ಆಯ್ದುಕೋ, ಎಂದು ಯೆಹೋವ ದೇವರು ಹೇಳುತ್ತಾರೆ,’ ಎಂದು ಹೇಳು,” ಎಂದರು.</verse>
				<verse number="13">ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನಿನ್ನ ದೇಶದಲ್ಲಿ ಮೂರು ವರುಷ ಕ್ಷಾಮ ಉಂಟಾಗಬೇಕೋ? ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಬೆನ್ನಟ್ಟಿ ಮೂರು ತಿಂಗಳವರೆಗೆ ಓಡಿಸಿಬಿಡಬೇಕೋ? ಇಲ್ಲವೆ ಮೂರು ದಿವಸಗಳವರೆಗೆ ಘೋರವ್ಯಾಧಿ ಉಂಟಾಗಬೇಕೋ? ಈಗ ನನ್ನನ್ನು ಕಳುಹಿಸಿದವರಿಗೆ ನಾನು ಏನು ಉತ್ತರ ತೆಗೆದುಕೊಂಡು ಹೋಗಬೇಕು? ಯೋಚಿಸಿನೋಡು,” ಎಂದನು.</verse>
				<verse number="14">ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಈಗ ಯೆಹೋವ ದೇವರ ಕೈಯಲ್ಲಿಯೇ ಬೀಳೋಣ, ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.</verse>
				<verse number="15">ಆದಕಾರಣ ಯೆಹೋವ ದೇವರು ಉದಯಕಾಲದಿಂದ ನೇಮಿಸಿದ ಕಾಲದವರೆಗೂ ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ದಾನಿನಿಂದ ಬೇರ್ಷೆಬದವರೆಗೂ ಇರುವ ಜನರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.</verse>
				<verse number="16">ದೂತನು ಯೆರೂಸಲೇಮನ್ನು ನಾಶಮಾಡಲು, ಅದರ ಮೇಲೆ ತನ್ನ ಕೈಚಾಚಿದಾಗ, ಯೆಹೋವ ದೇವರು ಆ ದಂಡನೆಗಾಗಿ ನೊಂದುಕೊಂಡು, ಜನರನ್ನು ಸಂಹರಿಸುತ್ತಿದ್ದ ದೇವದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಅರೌನನ ಕಣದ ಬಳಿಯಲ್ಲಿ ಇದ್ದನು.</verse>
				<verse number="17">ದಾವೀದನು ಜನರನ್ನು ಹೊಡೆಯುವ ದೂತನನ್ನು ನೋಡಿದಾಗ, ಅವನು ಯೆಹೋವ ದೇವರಿಗೆ, “ಇಗೋ, ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಕೆಟ್ಟದ್ದನ್ನು ಮಾಡಿದೆನು. ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನಿಮ್ಮ ಹಸ್ತವು ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.</verse>
				<verse number="18">ಆ ದಿವಸವೇ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿಸು,” ಎಂದನು.</verse>
				<verse number="19">ಆಗ ದಾವೀದನು ಗಾದನ ಮುಖಾಂತರವಾಗಿ ತನಗೆ ಯೆಹೋವ ದೇವರು ಆಜ್ಞಾಪಿಸಿದಂತೆ ಹೋದನು.</verse>
				<verse number="20">ಆದರೆ ಅರಸನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಣ್ಣೆತ್ತಿ ನೋಡಿದನು, ಆಗ ಅವನು ಕಣದಿಂದ ಹೊರಟು, ಅರಸನ ಮುಂದೆ ಮುಖ ಕೆಳಗೆಮಾಡಿ ಅಡ್ಡಬಿದ್ದನು.</verse>
				<verse number="21">ಅರೌನನು, “ಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು?” ಎಂದನು. ಅದಕ್ಕೆ ದಾವೀದನು, “ಈ ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ ಈ ಕಣವನ್ನು ನಿನ್ನಿಂದ ಕೊಂಡುಕೊಳ್ಳಲು ಬಂದಿದ್ದೇನೆ,” ಎಂದನು.</verse>
				<verse number="22">ಅರೌನನು ದಾವೀದನಿಗೆ, “ಅರಸನಾದ ನನ್ನ ಒಡೆಯನು ಅದನ್ನು ತೆಗೆದುಕೊಂಡು, ತನ್ನ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ಅರ್ಪಿಸಲಿ. ದಹನಬಲಿಗೋಸ್ಕರ ಎತ್ತುಗಳೂ, ಸೌದೆಗೆ ಹಂತೀಕುಂಟೆ ಮುಂತಾದವುಗಳು ಇಲ್ಲಿ ಇವೆ,” ಎಂದನು.</verse>
				<verse number="23">ಅರೌನನು ಇವುಗಳನ್ನೆಲ್ಲಾ ಅರಸನಿಗೆ ಕೊಟ್ಟನು. ಇದಲ್ಲದೆ ಅರೌನನು ಅರಸನಿಗೆ, “ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಅಂಗೀಕರಿಸಲಿ,” ಎಂದನು.</verse>
				<verse number="24">ಆದರೆ ಅರಸನು ಅರೌನನಿಗೆ, “ಹಾಗಲ್ಲ, ನಿಶ್ಚಯವಾಗಿ ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ಉಚಿತವಾಗಿ ಸಿಕ್ಕಿದ್ದನ್ನು ದಹನಬಲಿಯಾಗಿ ನನ್ನ ದೇವರಾದ ಯೆಹೋವ ದೇವರಿಗೆ ಅರ್ಪಿಸೆನು,” ಎಂದನು. ಹೀಗೆ ದಾವೀದನು ಆ ಕಣವನ್ನೂ, ಎತ್ತುಗಳನ್ನೂ, ಐವತ್ತು ಬೆಳ್ಳಿ ನಾಣ್ಯಗಳಿಗೆ ಕೊಂಡುಕೊಂಡನು.</verse>
				<verse number="25">ಆಗ ದಾವೀದನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು. ಹೀಗೆ ಯೆಹೋವ ದೇವರು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ, ಇಸ್ರಾಯೇಲಿನ ಕಡೆಯಿಂದ ಆ ವ್ಯಾಧಿಯು ನಿಂತುಹೋಯಿತು.</verse>
			</chapter>
		</book>
		<book number="11">
			<chapter number="1">
				<verse number="1">ಅರಸನಾದ ದಾವೀದನು ವೃದ್ಧನಾಗಿಯೂ, ಬಹಳ ಪ್ರಾಯ ಹೋದವನಾಗಿಯೂ ಇರುವಾಗ, ಅವನ ಮೇಲೆ ಹೊದಿಕೆಗಳನ್ನು ಹಾಕಿದರೂ, ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.</verse>
				<verse number="2">ಆದ್ದರಿಂದ ಅವನ ಸೇವಕರು ಅವನಿಗೆ, “ಅರಸ, ನಮ್ಮ ಒಡೆಯನಿಗೋಸ್ಕರ ಕನ್ನಿಕೆಯನ್ನು ಹುಡುಕುವೆವು. ಅವಳು ಅರಸನ ಬಳಿಯಲ್ಲಿ ನಿಂತು, ಅವನನ್ನು ಜೋಪಾನ ಮಾಡಲಿ. ಅರಸನಾದ ನಮ್ಮ ಒಡೆಯನಿಗೆ ಬೆಚ್ಚಗೆ ಆಗುವ ಹಾಗೆ, ಅವನ ಮಗ್ಗುಲಲ್ಲಿ ಅವಳು ಮಲಗಲಿ,” ಎಂದರು.</verse>
				<verse number="3">ಹಾಗೆಯೇ ಅವರು ಸೌಂದರ್ಯವತಿಯಾದ ಹುಡುಗಿಗೋಸ್ಕರ ಇಸ್ರಾಯೇಲಿನ ಮೇರೆಗಳಲ್ಲೆಲ್ಲಾ ಹುಡುಕಿ, ಶೂನೇಮ್ಯಳಾದ ಅಬೀಷಗ್ ಎಂಬವಳನ್ನು ಕಂಡುಕೊಂಡು, ಅವಳನ್ನು ಅರಸನ ಬಳಿಗೆ ತಂದರು.</verse>
				<verse number="4">ಈ ಸೌಂದರ್ಯವತಿಯಾದ ಹುಡುಗಿಯು ಅರಸನ ಆರೈಕೆ ಮಾಡುತ್ತಾ, ಅವನ ಸೇವೆ ಮಾಡುತ್ತಿದ್ದಳು. ಅರಸನು ಅವಳೊಂದಿಗೆ ಸಂಪರ್ಕ ಮಾಡಲಿಲ್ಲ.</verse>
				<verse number="5">ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು, “ನಾನು ಅರಸನಾಗಿರಬೇಕು,” ಎಂದುಕೊಂಡು, ತನಗೋಸ್ಕರ ರಥಗಳನ್ನೂ, ಸಾರಥಿಯರನ್ನೂ, ತನ್ನ ಮುಂದೆ ಓಡುವುದಕ್ಕೆ ಐವತ್ತು ಮಂದಿ ಪುರುಷರನ್ನೂ ಸಿದ್ಧಮಾಡಿದನು.</verse>
				<verse number="6">ಅವನ ತಂದೆಯು ಎಂದಾದರೂ, “ನೀನು ಹೀಗೆ ಏಕೆ ಮಾಡಿದೆ?” ಎಂದು ಹೇಳಿ ಅವನನ್ನು ಗದರಿಸಲಿಲ್ಲ. ಅವನು ಬಹು ಒಳ್ಳೆಯ ರೂಪವಂತನಾಗಿದ್ದನು. ಅಬ್ಷಾಲೋಮನ ತರುವಾಯ ಅವನ ತಾಯಿ ಅವನನ್ನು ಹೆತ್ತಳು.</verse>
				<verse number="7">ಅದೋನೀಯನು ಚೆರೂಯಳ ಮಗ ಯೋವಾಬ, ಯಾಜಕ ಅಬಿಯಾತರನ ಜೊತೆ ಸೇರಿ ಮಾತುಕತೆ ಮಾಡಿದನು. ಅವರು ಅದೋನೀಯನನ್ನು ಹಿಂಬಾಲಿಸಿ, ಅವನಿಗೆ ಸಹಾಯಕರಾಗಿದ್ದರು.</verse>
				<verse number="8">ಆದರೆ ಯಾಜಕನಾದ ಚಾದೋಕನೂ, ಯೆಹೋಯಾದಾವನ ಮಗ ಬೆನಾಯನೂ, ಪ್ರವಾದಿಯಾದ ನಾತಾನನೂ, ಶಿಮ್ಮಿಯೂ, ರೇಯಿಯೂ, ದಾವೀದನ ಪರಾಕ್ರಮಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.</verse>
				<verse number="9">ಅದೋನೀಯನು ಏನ್ ರೋಗೆಲಿನ ಬಳಿಯಲ್ಲಿರುವ ಚೋಹೆಲೆತ್ ಎಂಬ ಕಲ್ಲಿನ ಹತ್ತಿರ ಕುರಿಗಳನ್ನೂ, ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ ಕೊಲ್ಲಿಸಿ, ಅರಸನ ಮಕ್ಕಳಾದ ತನ್ನ ಸಮಸ್ತ ಸಹೋದರರನ್ನೂ, ಅರಸನ ಸೇವಕರಾದ ಸಮಸ್ತ ಯೆಹೂದದ ಜನರನ್ನೂ ಔತಣಕ್ಕೆ ಕರೆದನು.</verse>
				<verse number="10">ಆದರೆ ಪ್ರವಾದಿಯಾದ ನಾತಾನನನ್ನೂ, ಬೆನಾಯನನ್ನೂ, ಪರಾಕ್ರಮಶಾಲಿಗಳನ್ನೂ, ತನ್ನ ಸಹೋದರನಾದ ಸೊಲೊಮೋನನನ್ನೂ ಕರೆಯಲಿಲ್ಲ.</verse>
				<verse number="11">ಆಗ ನಾತಾನನು ಸೊಲೊಮೋನನ ತಾಯಿ ಬತ್ಷೆಬೆಳಿಗೆ, “ನಮ್ಮ ಒಡೆಯ ದಾವೀದನು ಅರಿಯದಿರುವಾಗ, ಹಗ್ಗೀತಳ ಮಗ ಅದೋನೀಯನು ಅರಸನಾಗಿದ್ದಾನೆ, ಎಂದು ನೀನು ಕೇಳಲಿಲ್ಲವೋ?</verse>
				<verse number="12">ಆದ್ದರಿಂದ ನೀನು ನಿನ್ನ ಪ್ರಾಣವನ್ನೂ, ನಿನ್ನ ಮಗ ಸೊಲೊಮೋನನ ಪ್ರಾಣವನ್ನೂ ರಕ್ಷಿಸಿಕೊಳ್ಳುವ ಹಾಗೆ ಅಪ್ಪಣೆಯಾದರೆ, ನಿನಗೆ ಆಲೋಚನೆ ಹೇಳುತ್ತೇನೆ.</verse>
				<verse number="13">ನೀನು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ, ‘ಅರಸನಾದ ನನ್ನ ಒಡೆಯನೇ, “ನಿಶ್ಚಯವಾಗಿ ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ, ಅವನು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ,” ನೀವು ನಿನ್ನ ದಾಸಿಗೆ ಆಣೆ ಇಟ್ಟು ಹೇಳಲಿಲ್ಲವೋ? ಹೀಗಿರಲಾಗಿ ಅದೋನೀಯನು ಆಳುವುದು ಏಕೆ?’ ಎಂದು ಕೇಳು.</verse>
				<verse number="14">ನೀನು, ಇನ್ನೂ ಅರಸನ ಸಂಗಡ ಮಾತನಾಡುತ್ತಿರುವಾಗ, ನಾನು ನಿನ್ನ ಹಿಂದೆಯೇ ಒಳಗೆ ಬಂದು, ನಿನ್ನ ಮಾತುಗಳನ್ನು ಸ್ಥಿರಮಾಡುವೆನು,” ಎಂದನು.</verse>
				<verse number="15">ಆಗ ಬತ್ಷೆಬೆಳು ಬಹು ವೃದ್ಧನಾಗಿದ್ದ ದಾವೀದನನ್ನು ನೋಡಲು ಅರಸನ ಕೊಠಡಿಯೊಳಗೆ ಹೋದಳು. ಅಲ್ಲಿ ಶೂನೇಮ್ಯಳಾದ ಅಬೀಷಗ್ ಅರಸನಿಗೆ ಸೇವೆಮಾಡುತ್ತಾ ಇದ್ದಳು.</verse>
				<verse number="16">ಆಗ ಬತ್ಷೆಬೆಳು ಅರಸನಿಗೆ ಬಾಗಿ ನಮಸ್ಕರಿಸಿದಳು. ಅರಸನಾದ ದಾವೀದನು, “ನಿನಗೇನು ಬೇಕು?” ಎಂದನು.</verse>
				<verse number="17">ಆಕೆಯು ಅರಸನಿಗೆ, “ನನ್ನ ಒಡೆಯನೇ, ನಿಶ್ಚಯವಾಗಿ ನಿನ್ನ ಮಗ ಸೊಲೊಮೋನನು ಆಳುವನೆಂದೂ, ಅವನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ, ನೀವು ನಿನ್ನ ದಾಸಿಗೆ ನಿನ್ನ ದೇವರಾದ ಯೆಹೋವ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದಿರಿ.</verse>
				<verse number="18">ಆದರೆ, ಅರಸನಾಗಿರುವ ನನ್ನ ಒಡೆಯನಾದ ನೀವು ಅರಿಯದೆ ಇರುವಾಗ, ಅದೋನೀಯನು ರಾಜನಾಗಿಬಿಟ್ಟಿದ್ದಾನೆ.</verse>
				<verse number="19">ಇದಲ್ಲದೆ ಅವನು ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ, ಕುರಿಗಳನ್ನೂ ಬಲಿಯಾಗಿ ಅರ್ಪಿಸಿದ್ದಾನೆ, ಅರಸನ ಮಕ್ಕಳೆಲ್ಲರನ್ನೂ, ಯಾಜಕನಾದ ಅಬಿಯಾತರನನ್ನೂ, ಸೇನಾಧಿಪತಿ ಯೋವಾಬನನ್ನೂ ಔತಣಕ್ಕೆ ಕರೆದಿದ್ದಾನೆ. ಆದರೆ ನಿನ್ನ ಸೇವಕನಾದ ಸೊಲೊಮೋನನನ್ನು ಅವನು ಕರೆಯಲಿಲ್ಲ.</verse>
				<verse number="20">ಆದ್ದರಿಂದ ಅರಸನಾದ ನನ್ನ ಒಡೆಯನೇ, ನಿಮ್ಮ ತರುವಾಯ ನನ್ನ ಒಡೆಯನಾದ ಅರಸನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನು ಯಾರೆಂದು ನೀವು ಹೇಳುವ ಹಾಗೆ, ಸಮಸ್ತ ಇಸ್ರಾಯೇಲರ ಕಣ್ಣುಗಳು ನಿಮ್ಮ ಮೇಲೆ ಇರುತ್ತವೆ.</verse>
				<verse number="21">ಇಲ್ಲದಿದ್ದರೆ ನನ್ನ ಒಡೆಯನೂ ಅರಸನೂ ತನ್ನ ಪಿತೃಗಳ ಸಂಗಡ ಸಮಾಧಿ ಸೇರಿದಾಗ, ನಾನೂ, ನನ್ನ ಮಗ ಸೊಲೊಮೋನನೂ ಅಪರಾಧಿಗಳಾಗಿ ಎಣಿಕೆಯಾಗುವೆವು,” ಎಂದಳು.</verse>
				<verse number="22">ಅವಳು ಅರಸನ ಸಂಗಡ ಇನ್ನೂ ಮಾತನಾಡುತ್ತಿರುವಾಗ, ಪ್ರವಾದಿಯಾದ ನಾತಾನನು ಬಂದನು.</verse>
				<verse number="23">ಆಗ ಅರಸನಿಗೆ, “ಪ್ರವಾದಿಯಾದ ನಾತಾನನು,” ಎಂದರು. ಅವನು ಒಳಗೆ ಅರಸನ ಮುಂದೆ ಬಂದಾಗ, ಮೋರೆ ಕೆಳಗಾಗಿ ನೆಲಕ್ಕೆ ಅಡ್ಡಬಿದ್ದನು.</verse>
				<verse number="24">ಆಗ ನಾತಾನನು, “ಅರಸನಾದ ನನ್ನ ಒಡೆಯನೇ, ಅದೋನೀಯನು, ನನ್ನ ತರುವಾಯ ಆಳುವನೆಂದೂ, ನನ್ನ ಸಿಂಹಾಸನ ಮೇಲೆ ಕುಳಿತುಕೊಳ್ಳುವನೆಂದೂ, ನೀವು ಹೇಳಿದ್ದು ಹೌದೋ?</verse>
				<verse number="25">ಏಕೆಂದರೆ ಈ ಹೊತ್ತು ಅವನು ಇಳಿದು ಹೋಗಿ, ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ, ಕುರಿಗಳನ್ನೂ ಕೊಲ್ಲಿಸಿ, ಅರಸನ ಮಕ್ಕಳೆಲ್ಲರನ್ನೂ, ಸೈನ್ಯಾಧಿಪತಿಗಳನ್ನೂ, ಯಾಜಕನಾದ ಅಬಿಯಾತರನನ್ನೂ ಕರೆದಿದ್ದಾನೆ. ಅವರು ಅವನ ಮುಂದೆ ತಿಂದು, ಕುಡಿದು, ‘ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ,’ ಎಂದು ಹೇಳುತ್ತಿದ್ದಾರೆ.</verse>
				<verse number="26">ಆದರೆ ನಿನ್ನ ಸೇವಕನಾದ ನನ್ನನ್ನೂ, ಯಾಜಕನಾದ ಚಾದೋಕನನ್ನೂ, ಯೆಹೋಯಾದಾವನ ಮಗ ಬೆನಾಯನನ್ನೂ, ನಿಮ್ಮ ಸೇವಕನಾದ ಸೊಲೊಮೋನನನ್ನೂ, ಅವನು ಕರೆಯಲೇ ಇಲ್ಲ.</verse>
				<verse number="27">ಅರಸನಾದ ನನ್ನ ಒಡೆಯನಿಂದ ಈ ಕಾರ್ಯವಾಯಿತೋ? ಅರಸನಾದ ನನ್ನ ಒಡೆಯನು, ತನ್ನ ತರುವಾಯ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನು ಯಾರೆಂದು ನಿಮ್ಮ ಸೇವಕನಾದ ನನಗೆ ನೀವು ತಿಳಿಸದೆ ಹೋದಿರೋ?” ಎಂದನು.</verse>
				<verse number="28">ಆಗ ಅರಸನಾದ ದಾವೀದನು ಉತ್ತರವಾಗಿ, “ಬತ್ಷೆಬೆಳನ್ನು ನನ್ನ ಬಳಿಗೆ ಕರೆಯಿರಿ,” ಎಂದನು. ಅವಳು ಅರಸನ ಸನ್ನಿಧಾನಕ್ಕೆ ಬಂದು ಅರಸನ ಮುಂದೆ ನಿಂತಳು.</verse>
				<verse number="29">ಅರಸನು ಆಕೆಗೆ, “ನಿಶ್ಚಯವಾಗಿ, ನಿನ್ನ ಮಗ ಸೊಲೊಮೋನನು ನನ್ನ ತರುವಾಯ ಆಳುವನೆಂದೂ,</verse>
				<verse number="30">ಅವನು ನನಗೆ ಬದಲಾಗಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಾನು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿನಲ್ಲಿ ನಿನಗೆ ಹೇಗೆ ಆಣೆ ಇಟ್ಟು ಹೇಳಿದೆನೋ ಹಾಗೆಯೇ, ಈ ದಿನ ನಿಶ್ಚಯವಾಗಿ ಮಾಡುವೆನೆಂದೂ ಸಮಸ್ತ ಇಕ್ಕಟ್ಟಿನೊಳಗಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಯೆಹೋವ ದೇವರ ಮೇಲೆ ಆಣೆ ಇಡುತ್ತೇನೆ,” ಎಂದೂ ಪ್ರಮಾಣವಾಗಿ ಹೇಳಿದನು.</verse>
				<verse number="31">ಬತ್ಷೆಬೆಳು ಮುಖವನ್ನು ನೆಲಕ್ಕೆ ಬಗ್ಗಿಸಿ, ಅರಸನನ್ನು ವಂದಿಸಿ, “ನನ್ನ ಒಡೆಯನೂ, ಅರಸನೂ ಆದ ದಾವೀದನು ಎಂದೆಂದಿಗೂ ಬದುಕಲಿ,” ಎಂದಳು.</verse>
				<verse number="32">ಆಗ ಅರಸನಾದ ದಾವೀದನು, “ಯಾಜಕನಾದ ಚಾದೋಕನನ್ನೂ, ಪ್ರವಾದಿಯಾದ ನಾತಾನನನ್ನೂ, ಯೆಹೋಯಾದಾವನ ಮಗ ಬೆನಾಯನನ್ನೂ ನನ್ನ ಬಳಿಗೆ ಕರೆಯಿರಿ,” ಎಂದನು. ಅವರು ಅರಸನ ಸಮ್ಮುಖಕ್ಕೆ ಬಂದರು.</verse>
				<verse number="33">ಅರಸನು ಅವರಿಗೆ, “ನೀವು ನಿಮ್ಮ ಯಜಮಾನನ ಸೇವಕರನ್ನು ಕರೆದುಕೊಂಡು ಹೋಗಿ ನನ್ನ ಮಗ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವನನ್ನು ಕರೆದುಕೊಂಡು ಹೋಗಿರಿ.</verse>
				<verse number="34">ಅಲ್ಲಿ ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಲಿ. ತುತೂರಿಯನ್ನು ಊದಿ, ‘ಅರಸ ಸೊಲೊಮೋನನು ಚಿರಂಜೀವಿಯಾಗಿರಲಿ!’ ಎಂದು ಘೋಷಿಸಿರಿ.</verse>
				<verse number="35">ಆಗ ಅವನು ಬಂದು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ಹಾಗೆ, ನೀವು ಅವನ ಹಿಂದೆ ಬನ್ನಿರಿ. ಏಕೆಂದರೆ ಅವನು ನನಗೆ ಬದಲಾಗಿ ಅರಸನಾಗಿರುವನು. ಇಸ್ರಾಯೇಲಿನ ಮೇಲೆಯೂ, ಯೆಹೂದದ ಮೇಲೆಯೂ, ನಾಯಕನಾಗಿರಲು ನಾನು ಅವನನ್ನು ನೇಮಿಸಿದ್ದೇನೆ,” ಎಂದನು.</verse>
				<verse number="36">ಯೆಹೋಯಾದಾವನ ಮಗ ಬೆನಾಯನು ಅರಸನಿಗೆ ಉತ್ತರವಾಗಿ, “ಆಮೆನ್, ಅರಸನಾದ ನನ್ನ ಒಡೆಯನ ದೇವರಾದ ಯೆಹೋವ ದೇವರು ಹಾಗೆಯೇ ಹೇಳಲಿ.</verse>
				<verse number="37">ಯೆಹೋವ ದೇವರು ಅರಸನಾದ ನನ್ನ ಒಡೆಯನ ಸಂಗಡ ಹೇಗೆ ಇದ್ದರೋ, ಹಾಗೆಯೇ ಸೊಲೊಮೋನನ ಸಂಗಡ ಇದ್ದು, ನನ್ನ ಒಡೆಯನೂ, ಅರಸನೂ ಆದ ದಾವೀದನ ಸಿಂಹಾಸನಕ್ಕಿಂತ ಇವನ ಸಿಂಹಾಸನವನ್ನು ಅಧಿಕವಾಗಿ ಮಾಡಲಿ,” ಎಂದನು.</verse>
				<verse number="38">ಆಗ ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ, ಯೆಹೋಯಾದಾವನ ಮಗ ಬೆನಾಯನೂ, ಕೆರೇತ್ಯರೂ, ಪೆಲೇತ್ಯರೂ ಹೋಗಿ, ಸೊಲೊಮೋನನನ್ನು ಅರಸನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನಿಗೆ ಕರೆತಂದರು.</verse>
				<verse number="39">ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು, “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ,” ಎಂದರು.</verse>
				<verse number="40">ಇದಲ್ಲದೆ ಜನರೆಲ್ಲರೂ ಅವನನ್ನು ಹಿಂಬಾಲಿಸಿದರು. ಜನರು ಕೊಳಲು ಊದಿ ಮಹಾ ಆನಂದದಿಂದ ಸಂತೋಷಿಸಿದರು. ಅವರ ಶಬ್ದದಿಂದ ಭೂಮಿಯು ಕಂಪಿಸಿತು.</verse>
				<verse number="41">ಆಗ ಅದೋನೀಯನೂ, ಅವನ ಸಂಗಡ ಕರೆಹೊಂದಿದವರೂ ತಿಂದು, ತೀರಿಸಿದಾಗ ಅದನ್ನು ಕೇಳಿದರು. ಯೋವಾಬನು ತುತೂರಿಯ ಶಬ್ದವನ್ನು ಕೇಳಿದಾಗ, “ಪಟ್ಟಣದಲ್ಲಿ ಗದ್ದಲದ ಶಬ್ದವೇಕೆ?” ಎಂದನು.</verse>
				<verse number="42">ಅವನು ಇನ್ನೂ ಮಾತನಾಡುತ್ತಿರುವಾಗ, ಯಾಜಕನಾಗಿರುವ ಅಬಿಯಾತರನ ಮಗ ಯೋನಾತಾನನು ಬಂದನು. ಅದೋನೀಯನು ಅವನಿಗೆ, “ಒಳಗೆ ಬಾ. ಏಕೆಂದರೆ ನೀನು ಯೋಗ್ಯ ಮನುಷ್ಯನೂ, ಒಳ್ಳೆಯ ಸಮಾಚಾರ ತರುವವನೂ ಆಗಿರುತ್ತೀ?” ಎಂದನು.</verse>
				<verse number="43">ಆಗ ಯೋನಾತಾನನು ಅದೋನೀಯನಿಗೆ, ನಿಶ್ಚಯವಾಗಿ ಒಳ್ಳೆಯ ಸಮಾಚಾರವಲ್ಲ! “ನಮ್ಮ ಒಡೆಯನೂ ಅರಸನೂ ಆಗಿರುವ ದಾವೀದನು ಸೊಲೊಮೋನನನ್ನು ಅರಸನಾಗಿ ಮಾಡಿದ್ದಾನೆ.</verse>
				<verse number="44">ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ, ಪ್ರವಾದಿ ನಾತಾನನನ್ನೂ, ಯೆಹೋಯಾದಾವನ ಮಗ ಬೆನಾಯನನ್ನೂ, ಕೆರೇತ್ಯರನ್ನೂ, ಪೆಲೇತ್ಯರನ್ನೂ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರಕತ್ತೆಯ ಮೇಲೆ ಕೂಡಿಸಿಕೊಂಡು ಹೋಗಿ,</verse>
				<verse number="45">ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಸೊಲೊಮೋನನನ್ನು ಗೀಹೋನಿನಲ್ಲಿ ಅರಸನಾಗಿರಲು ಅಭಿಷೇಕಿಸಿದ್ದಾರೆ. ಅವರು ಸಂತೋಷಪಡುತ್ತಾ ಅಲ್ಲಿಂದ ಬಂದ ಕಾರಣ ಪಟ್ಟಣವು ಗದ್ದಲವಾಯಿತು. ನೀವು ಕೇಳುವ ಆರ್ಭಟವು ಇದೇ.</verse>
				<verse number="46">ಇದಲ್ಲದೆ ಸೊಲೊಮೋನನು ರಾಜ್ಯ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.</verse>
				<verse number="47">ಇದರ ಹೊರತು ಅರಸನ ಸೇವಕರೂ, ನಮ್ಮ ಯಜಮಾನನೂ, ಅರಸನೂ ಆದ ದಾವೀದನನ್ನು ಆಶೀರ್ವದಿಸಲು ಬಂದು, ‘ದೇವರು ಸೊಲೊಮೋನನ ಹೆಸರನ್ನು ನಿಮ್ಮ ಹೆಸರಿಗಿಂತಲೂ ಪ್ರಸಿದ್ಧ ಮಾಡಲಿ. ಅವನ ಸಿಂಹಾಸನವನ್ನು ನಿಮ್ಮ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಲಿ,’ ಎಂದೂ ಹೇಳುತ್ತಿರುವಾಗ, ಅರಸನು ಮಂಚದ ಮೇಲೆ ಬಾಗಿ,</verse>
				<verse number="48">‘ಕಣ್ಣುಗಳು ನೋಡುತ್ತಿರುವಾಗ ಇಂದು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ಉತ್ತರಾಧಿಕಾರಿಯನ್ನು ನನಗೆ ಕೊಟ್ಟಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ,’ ಎಂದು ಹೇಳಿದ್ದಾರೆ,” ಎಂದನು.</verse>
				<verse number="49">ಆಗ ಅದೋನೀಯನ ಸಂಗಡ ಔತಣಕ್ಕೆ ಬಂದಿದ್ದ ಎಲ್ಲರೂ ಹೆದರಿಕೊಂಡು ಎದ್ದು, ತಮ್ಮ ತಮ್ಮ ಸ್ಥಳಗಳಿಗೆ ಹೊರಟು ಹೋದರು.</verse>
				<verse number="50">ಆದರೆ ಅದೋನೀಯನು ಸೊಲೊಮೋನನಿಗೆ ಭಯಪಟ್ಟದ್ದರಿಂದ ಎದ್ದು ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದುಕೊಂಡನು.</verse>
				<verse number="51">ಆಗ ಒಬ್ಬನು ಅರಸನಾದ ಸೊಲೊಮೋನನಿಗೆ, “ಅದೋನೀಯನು, ನಿನಗೆ ಭಯಪಡುತ್ತಾನೆ. ಏಕೆಂದರೆ ಇಗೋ, ಅವನು ಬಲಿಪೀಠದ ಕೊಂಬುಗಳನ್ನು ಹಿಡಿದು, ‘ಅರಸನಾದ ಸೊಲೊಮೋನನು ಖಡ್ಗದಿಂದ ತನ್ನ ಸೇವಕನನ್ನು ಕೊಲ್ಲುವುದಿಲ್ಲವೆಂದು ಈ ಹೊತ್ತು ನನಗೆ ಆಣೆ ಇಡಲಿ,’ ಎಂದು ಹೇಳುತ್ತಾನೆ,” ಎಂದನು.</verse>
				<verse number="52">ಅದಕ್ಕೆ ಸೊಲೊಮೋನನು, “ಅವನು ಉತ್ತಮನಾಗಿ ನಡೆಯುವುದಾದರೆ, ಅವನ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳದು. ಆದರೆ ಅವನಲ್ಲಿ ಕೆಟ್ಟತನವು ಸಿಕ್ಕಿದರೆ ಅವನು ಸಾಯುವನು,” ಎಂದನು.</verse>
				<verse number="53">ಅರಸನಾದ ಸೊಲೊಮೋನನು ಅವನನ್ನು ಕರೆಸಿದಾಗ, ಬಲಿಪೀಠದ ಬಳಿಯಿಂದ ಅವನನ್ನು ಕರೆದುಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡಬಿದ್ದನು. ಸೊಲೊಮೋನನು ಅವನಿಗೆ, “ನಿನ್ನ ಮನೆಗೆ ಹೋಗು,” ಎಂದನು.</verse>
			</chapter>
			<chapter number="2">
				<verse number="1">ಆದರೆ ದಾವೀದನ ಸಾಯುವ ಕಾಲ ಸಮೀಪಿಸಿದ್ದರಿಂದ ಅವನು ತನ್ನ ಮಗ ಸೊಲೊಮೋನನಿಗೆ ಆಜ್ಞಾಪಿಸಿದ್ದೇನೆಂದರೆ,</verse>
				<verse number="2">“ಭೂಮಿಯಲ್ಲಿರುವವರೆಲ್ಲರು ಹೋಗುವ ಮಾರ್ಗವಾಗಿ ನಾನು ಹೋಗುತ್ತೇನೆ. ನೀನು ಬಲಗೊಂಡು ಶೂರನಾಗಿರು.</verse>
				<verse number="3">ನಿನ್ನ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಅನುಸರಿಸಿ ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ನಿಯಮದಲ್ಲಿ ಬರೆದಿರುವ ಅವರ ಆಜ್ಞಾನಿಯಮಗಳಿಗೂ, ವಿಧಿನಿರ್ಣಯಗಳಿಗೂ ವಿಧೇಯನಾಗಿರು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ, ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿಯೂ ಯಶಸ್ವಿಯಾಗುವೆ.</verse>
				<verse number="4">ಯೆಹೋವ ದೇವರು, ‘ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನನ್ನ ಮುಂದೆ ನಂಬಿಗಸ್ತರಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಅವರು ಇಸ್ರಾಯೇಲಿನ ಸಿಂಹಾಸನದ ಮೇಲೆ ತಪ್ಪದೇ ಕುಳಿತುಕೊಳ್ಳುವರು,’ ಎಂದು ನನಗೆ ಹೇಳಿದ ತಮ್ಮ ವಾಕ್ಯವನ್ನು ಸ್ಥಿರಪಡಿಸುವರು.</verse>
				<verse number="5">“ಇದಲ್ಲದೆ ಚೆರೂಯಳ ಮಗ ಯೋವಾಬನು ನನಗೂ, ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗ ಅಬ್ನೇರನಿಗೂ, ಯೆತೆರನ ಮಗ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಅವನು ಅವರನ್ನು ಕೊಂದು, ಸಮಾಧಾನ ಕಾಲದಲ್ಲಿ ಯುದ್ಧದ ರಕ್ತವನ್ನು ಚೆಲ್ಲಿ, ತನ್ನ ನಡುವಲ್ಲಿರುವ ನಡುಕಟ್ಟಿನ ಮೇಲೆಯೂ, ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು.</verse>
				<verse number="6">ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರಮಾಡಿ, ಅವನ ನರೆತಲೆಯನ್ನು ಸಮಾಧಾನದಿಂದ ಸಮಾಧಿ ಸೇರದಂತೆ ಮಾಡು.</verse>
				<verse number="7">“ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ದಯೆತೋರಿಸು. ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಏಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.</verse>
				<verse number="8">“ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾಮೀನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನ್ ನದಿ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದ್ದರಿಂದ, ‘ನಾನು ನಿನ್ನನ್ನು ಖಡ್ಗದಿಂದ ಕೊಲ್ಲುವುದಿಲ್ಲ,’ ಎಂದು ಯೆಹೋವ ದೇವರ ಹೆಸರಿನಲ್ಲಿ ಆಣೆಯಿಟ್ಟೆನು.</verse>
				<verse number="9">ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ನೀನು ಬುದ್ಧಿವಂತನಾಗಿರುವುದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ. ಆದರೆ ಅವನ ನರೆತಲೆಯನ್ನು ರಕ್ತದಿಂದ ಸಮಾಧಿ ಸೇರುವಂತೆ ಮಾಡು,” ಎಂದನು.</verse>
				<verse number="10">ಹೀಗೆಯೇ ದಾವೀದನು ಮರಣಹೊಂದಿ ತನ್ನ ಪಿತೃಗಳ ಜೊತೆ ಸೇರಿದನು. ದಾವೀದನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು.</verse>
				<verse number="11">ದಾವೀದನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರ್ಷಗಳು. ಏಳು ವರ್ಷ ಹೆಬ್ರೋನಿನಲ್ಲಿ ಆಳಿದನು. ಮೂವತ್ತಮೂರು ವರ್ಷ ಯೆರೂಸಲೇಮಿನಲ್ಲಿ ಆಳಿದನು.</verse>
				<verse number="12">ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ಕುಳಿತನು. ಅವನ ರಾಜ್ಯವು ಬಹು ಸ್ಥಿರವಾಗಿತ್ತು.</verse>
				<verse number="13">ಆದರೆ ಹಗ್ಗೀತಳ ಮಗ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಯ ದರ್ಶನಕ್ಕೆ ಬಂದನು. ಬತ್ಷೆಬೆಳು ಅವನಿಗೆ, “ಸಮಾಧಾನವಾಗಿ ಬರುತ್ತೀಯೋ?” ಎಂದಳು. ಅದಕ್ಕೆ ಅವನು, “ಸಮಾಧಾನವೇ,” ಎಂದನು.</verse>
				<verse number="14">ಅವನು, “ನಿನಗೆ ಹೇಳತಕ್ಕ ಮಾತಿದೆ,” ಎಂದನು. ಬತ್ಷೆಬೆಳು, “ಹೇಳು,” ಎಂದಳು.</verse>
				<verse number="15">ಆಗ ಅವನು, “ರಾಜ್ಯವು ನನ್ನದಾಗಿತ್ತೆಂದೂ, ನಾನು ಆಳುವ ಸಮಸ್ತ ಇಸ್ರಾಯೇಲರು ನನ್ನ ಮೇಲೆ ಕಣ್ಣಿಟ್ಟಿದ್ದರೆಂದೂ ನೀನು ಬಲ್ಲೆ. ಆದರೆ ಎಲ್ಲವೂ ಬದಲಾಗಿ, ರಾಜ್ಯವು ನನ್ನ ಸಹೋದರನಿಗೆ ದೊರಕಿತು. ಏಕೆಂದರೆ ಅದು ಅವನಿಗೆ ಯೆಹೋವ ದೇವರಿಂದ ಉಂಟಾಯಿತು.</verse>
				<verse number="16">ಆದರೆ ಈಗ ನನಗೆ ಒಂದು ಬಿನ್ನಹವಿದೆ. ಅದನ್ನು ತಿರಸ್ಕರಿಸಬೇಡ,” ಎಂದನು. ಬತ್ಷೆಬೆಳು ಅವನಿಗೆ, “ಅದೇನು ಹೇಳು,” ಎಂದಳು.</verse>
				<verse number="17">ಆಗ ಅವನು, “ನೀನು ದಯಮಾಡಿ ಅರಸನಾದ ಸೊಲೊಮೋನನು ಶೂನೇಮ್ಯಳಾದ ಅಬೀಷಗಳನ್ನು ನನಗೆ ಹೆಂಡತಿಯಾಗಿ ಕೊಡಲು ಅವನನ್ನು ಕೇಳು. ಏಕೆಂದರೆ ಅವನು ನಿನಗೆ ಆಗುವುದಿಲ್ಲವೆಂದು ಹೇಳುವುದಿಲ್ಲ,” ಎಂದನು.</verse>
				<verse number="18">ಅದಕ್ಕೆ ಬತ್ಷೆಬೆಳು, “ಒಳ್ಳೆಯದು, ನಿನಗೋಸ್ಕರ ಅರಸನ ಸಂಗಡ ಮಾತನಾಡುವೆನು,” ಎಂದಳು.</verse>
				<verse number="19">ಆದ್ದರಿಂದ ಬತ್ಷೆಬೆಳು ಅದೋನೀಯನಿಗೋಸ್ಕರ ಮಾತನಾಡುವುದಕ್ಕೆ ಅರಸನಾದ ಸೊಲೊಮೋನನ ಬಳಿಗೆ ಹೋದಳು. ಅರಸನು ಅವಳನ್ನು ಎದುರುಗೊಳ್ಳಲು ಎದ್ದು, ಅವಳಿಗೆ ಅಡ್ಡಬಿದ್ದು, ತಾನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ರಾಜಮಾತೆಗೋಸ್ಕರ ಆಸನವನ್ನು ಹಾಕಿಸಿದನು. ಅವಳು ಅವನ ಬಲಗಡೆಯಲ್ಲಿ ಕುಳಿತುಕೊಂಡಳು.</verse>
				<verse number="20">ಅವಳು ಅವನಿಗೆ, “ನಿನ್ನಿಂದ ಒಂದು ಚಿಕ್ಕ ಬಿನ್ನಹವಿದೆ, ಆಗುವುದಿಲ್ಲವೆಂದು ಹೇಳಬೇಡ,” ಎಂದಳು. ಅರಸನು ಅವಳಿಗೆ, “ನನ್ನ ತಾಯಿಯೇ ಕೇಳು. ಏಕೆಂದರೆ ನಾನು ನಿನ್ನ ಮಾತಿಗೆ ಆಗುವುದಿಲ್ಲವೆಂದು ಹೇಳುವುದಿಲ್ಲ,” ಎಂದನು.</verse>
				<verse number="21">ಅದಕ್ಕವಳು, “ಶೂನೇಮ್ಯಳಾದ ಅಬೀಷಗಳನ್ನು ನಿನ್ನ ಅಣ್ಣ ಅದೋನೀಯನಿಗೆ ಹೆಂಡತಿಯಾಗಲು ಅಪ್ಪಣೆಯಾಗಲಿ,” ಎಂದಳು.</verse>
				<verse number="22">ಅರಸನಾದ ಸೊಲೊಮೋನನು ತನ್ನ ತಾಯಿಗೆ ಉತ್ತರವಾಗಿ, “ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ನೀನು ಕೇಳುವುದೇಕೆ? ರಾಜ್ಯವನ್ನೂ ಕೇಳು. ಏಕೆಂದರೆ ಅವನು ನನ್ನ ಅಣ್ಣನಾಗಿದ್ದಾನೆ. ಯಾಜಕ ಅಬಿಯಾತರನಿಗೋಸ್ಕರವೂ, ಚೆರೂಯಳ ಮಗ ಯೋವಾಬನಿಗೋಸ್ಕರವೂ ಕೇಳು,” ಎಂದನು.</verse>
				<verse number="23">ತರುವಾಯ ಅರಸನಾದ ಸೊಲೊಮೋನನು, “ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ, ನನಗೆ ದೇವರು ಹಾಗೆಯೂ, ಅದಕ್ಕಿಂತಲೂ ಅಧಿಕವಾಗಿಯೂ ಮಾಡಲಿ,” ಎಂದು ಯೆಹೋವ ದೇವರ ಹೆಸರಿನಲ್ಲಿ ಆಣೆ ಇಟ್ಟನು.</verse>
				<verse number="24">“ಹಾಗಾದರೆ ನನ್ನನ್ನು ಸ್ಥಿರಪಡಿಸಿ, ನನ್ನ ತಂದೆ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡಿಸಿ, ತಾವು ಮಾತುಕೊಟ್ಟ ಪ್ರಕಾರ ನನಗೆ ಮನೆತನ ಕಟ್ಟಿಸಿದ ಯೆಹೋವ ದೇವರ ಜೀವದಾಣೆ, ಈ ಹೊತ್ತು ಅದೋನೀಯನು ಸಾಯಬೇಕು,” ಎಂದನು.</verse>
				<verse number="25">ಆಗ ಅರಸನಾದ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನನ್ನು ಕಳುಹಿಸಿದನು. ಇವನು ಹೋಗಿ ಅದೋನೀಯನನ್ನು ಕೊಂದುಹಾಕಿದನು.</verse>
				<verse number="26">ಯಾಜಕನಾದ ಅಬಿಯಾತರನಿಗೆ ಅರಸನು, “ನೀನು ಅನಾತೋತಿನಲ್ಲಿರುವ ನಿನ್ನ ಹೊಲಗಳಿಗೆ ಹೋಗು. ಏಕೆಂದರೆ ನೀನು ಸಾವಿಗೆ ಪಾತ್ರನಾಗಿದ್ದೀಯೆ. ಆದರೆ ನೀನು ಸಾರ್ವಭೌಮ ಯೆಹೋವ ದೇವರ ಮಂಜೂಷವನ್ನು ನನ್ನ ತಂದೆ ದಾವೀದನ ಮುಂದೆ ಹೊತ್ತದ್ದರಿಂದಲೂ, ನನ್ನ ತಂದೆಯ ಎಲ್ಲಾ ಕಷ್ಟಗಳಲ್ಲಿ ನೀನು ಪಾಲುಗಾರನಾಗಿದ್ದರಿಂದಲೂ, ನಾನು ಈಗ ನಿನ್ನನ್ನು ಸಾಯಿಸುವುದಿಲ್ಲ,” ಎಂದನು.</verse>
				<verse number="27">ಹೀಗೆಯೇ ಯೆಹೋವ ದೇವರು ಶೀಲೋವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವುದಕ್ಕೆ ಸೊಲೊಮೋನನು ಅಬಿಯಾತರನನ್ನು ಯೆಹೋವ ದೇವರಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು.</verse>
				<verse number="28">ಆಗ ಈ ಸುದ್ದಿ ಯೋವಾಬನಿಗೆ ಬಂತು. ಏಕೆಂದರೆ ಯೋವಾಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ, ಅದೋನೀಯನ ಹಿಂದೆ ಹೋದನು. ಆದ್ದರಿಂದ ಯೋವಾಬನು ಯೆಹೋವ ದೇವರ ಮಂದಿರಕ್ಕೆ ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.</verse>
				<verse number="29">ಯೋವಾಬನು ಯೆಹೋವ ದೇವರ ಗುಡಾರಕ್ಕೆ ಓಡಿಹೋಗಿ ಬಲಿಪೀಠದ ಬಳಿಯಲ್ಲಿ ಇದ್ದಾನೆ, ಎಂಬ ಸುದ್ದಿ ಅರಸನಾದ ಸೊಲೊಮೋನನಿಗೆ ತಿಳಿಯಿತು. ಆಗ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನಿಗೆ, “ನೀನು ಹೋಗಿ ಅವನನ್ನು ಕೊಂದುಹಾಕು,” ಎಂದನು.</verse>
				<verse number="30">ಬೆನಾಯನು ಯೆಹೋವ ದೇವರ ಗುಡಾರಕ್ಕೆ ಬಂದು ಯೋವಾಬನಿಗೆ, “ನೀನು ಹೊರಗೆ ಬರಬೇಕೆಂದು ಅರಸನು ಹೇಳುತ್ತಾನೆ,” ಎಂದನು. ಅದಕ್ಕವನು, “ಇಲ್ಲ, ಇಲ್ಲಿಯೇ ಸಾಯುತ್ತೇನೆ,” ಎಂದನು. ಬೆನಾಯನು ಅರಸನ ಬಳಿಗೆ ತಿರುಗಿ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.</verse>
				<verse number="31">ಅರಸನು ಬೆನಾಯನಿಗೆ, “ಅವನು ಹೇಳಿದ ಪ್ರಕಾರ ಮಾಡು. ಯೋವಾಬನು ನಿನ್ನ ಹಾಗೂ ನನ್ನ ತಂದೆಯ ಮನೆಯವರ ನಿರಪರಾಧ ರಕ್ತವನ್ನು ಚೆಲ್ಲಿದ ದೋಷವನ್ನು ತೊಲಗಿಸುವ ಹಾಗೆ ಅವನನ್ನು ಕೊಂದು, ಅವನ ಶವವನ್ನು ಸಮಾಧಿಮಾಡು.</verse>
				<verse number="32">ಆಗ ಯೆಹೋವ ದೇವರು ಅವನ ತಲೆಯ ಮೇಲೆ ಅವನ ರಕ್ತಾಪರಾಧವನ್ನು ಬರಮಾಡುವರು. ಏಕೆಂದರೆ ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಖಡ್ಗದಿಂದ ಕೊಂದನು. ಅವರು ಯಾರೆಂದರೆ, ಇಸ್ರಾಯೇಲಿನ ಸೈನ್ಯಕ್ಕೆ ಅಧಿಪತಿಯೂ ನೇರನ ಮಗನೂ ಆದ ಅಬ್ನೇರನು, ಯೆಹೂದ ಸೈನ್ಯಕ್ಕೆ ಅಧಿಪತಿಯೂ ಯೆತೆರನ ಮಗನೂ ಆದ ಅಮಾಸನು.</verse>
				<verse number="33">ಆದ್ದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆಯೂ, ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವುದು. ಆದರೆ ದಾವೀದನ ಮೇಲೆಯೂ, ಅವನ ಸಂತಾನದವರ ಮೇಲೆಯೂ, ಅವನ ಮನೆಯ ಮೇಲೆಯೂ, ಅವನ ಸಿಂಹಾಸನದ ಮೇಲೆಯೂ ಯೆಹೋವ ದೇವರಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವುದು,” ಎಂದನು.</verse>
				<verse number="34">ಹಾಗೆಯೇ ಯೆಹೋಯಾದಾವನ ಮಗ ಬೆನಾಯನು ಹೋಗಿ ಯೋವಾಬನನ್ನು ಕೊಂದುಹಾಕಿದನು. ಅವನ ಶವಕ್ಕೆ ಮರುಭೂಮಿಯಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಯಾಯಿತು.</verse>
				<verse number="35">ಆಗ ಅರಸನು ಯೆಹೋಯಾದಾವನ ಮಗ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಅಬಿಯಾತರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.</verse>
				<verse number="36">ಆಗ ಅರಸನು ಶಿಮ್ಮಿಯನ್ನು ಕರೆಯಿಸಿ ಅವನಿಗೆ, “ನೀನು ಯೆರೂಸಲೇಮಿನಲ್ಲಿ, ನಿನಗೆ ಮನೆಯನ್ನು ಕಟ್ಟಿಸಿಕೊಂಡು, ಅಲ್ಲಿಂದ ಎಲ್ಲಿಗೂ ಹೋಗದೆ ವಾಸವಾಗಿರು.</verse>
				<verse number="37">ಯಾವ ದಿವಸದಲ್ಲಿ ನೀನು ಹೊರಟು ಕಿದ್ರೋನೆಂಬ ಹಳ್ಳವನ್ನು ದಾಟುವೆಯೋ, ಆ ದಿವಸದಲ್ಲಿ ನಿಶ್ಚಯವಾಗಿ ಸಾಯುವೆ ಎಂದು ಖಂಡಿತ ತಿಳಿದುಕೋ ಮತ್ತು ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರುವುದು,” ಎಂದನು.</verse>
				<verse number="38">ಶಿಮ್ಮಿ ಅರಸನಿಗೆ, “ನಿಮ್ಮ ಮಾತು ಒಳ್ಳೆಯದು. ಅರಸನಾದ ನನ್ನ ಒಡೆಯನು ಹೇಳಿದ ಪ್ರಕಾರವೇ, ನಿನ್ನ ಸೇವಕನು ಮಾಡುವನು,” ಎಂದನು. ಶಿಮ್ಮಿ ಯೆರೂಸಲೇಮಿನಲ್ಲಿ ಬಹಳ ದಿವಸ ವಾಸವಾಗಿದ್ದನು.</verse>
				<verse number="39">ಮೂರು ವರ್ಷಗಳ ಅಂತ್ಯದಲ್ಲಿ ಶಿಮ್ಮಿಯ ಸೇವಕರಲ್ಲಿ ಇಬ್ಬರು ಗತ್‌ನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ಆಗ ಶಿಮ್ಮಿಗೆ, “ನಿನ್ನ ಸೇವಕರು ಗತ್‌ನಲ್ಲಿ ಇದ್ದಾರೆ” ಎಂದು ತಿಳಿಸಿದರು.</verse>
				<verse number="40">ಆದ್ದರಿಂದ ಶಿಮ್ಮಿ ಎದ್ದು ತನ್ನ ಕತ್ತೆಗೆ ತಡಿಯನ್ನು ಹಾಕಿಸಿ, ತನ್ನ ಸೇವಕರನ್ನು ಹುಡುಕಲು ಗತ್‌ನಲ್ಲಿರುವ ಆಕೀಷನ ಬಳಿಗೆ ಹೋದನು. ಶಿಮ್ಮಿ ಹೋಗಿ ಗತ್‌ನಿಂದ ತನ್ನ ಸೇವಕರನ್ನು ಕರೆದುಕೊಂಡು ಬಂದನು.</verse>
				<verse number="41">ಶಿಮ್ಮಿ ಯೆರೂಸಲೇಮನ್ನು ಬಿಟ್ಟು ಗತ್ ಊರಿಗೆ ಹೋಗಿ, ತಿರುಗಿ ಬಂದಿದ್ದಾನೆಂದು ಸೊಲೊಮೋನನಿಗೆ ತಿಳಿಯಿತು.</verse>
				<verse number="42">ಆಗ ಅರಸನು ಶಿಮ್ಮಿಯನ್ನು ಕರೆಕಳುಹಿಸಿ ಅವನಿಗೆ, “ನೀನು ಯಾವ ದಿವಸದಲ್ಲಿ ಹೊರಟು ಎಲ್ಲಿಗಾದರೂ ಹೋದರೆ, ಅದೇ ದಿವಸದಲ್ಲಿ ನಿಶ್ಚಯವಾಗಿ ಸಾಯುವೆ, ಎಂದು ಖಂಡಿತವಾಗಿ ತಿಳಿದುಕೋ, ಎಂಬುದಾಗಿ ನಾನು ನಿನಗೆ ದೃಢವಾಗಿ ಹೇಳಿ, ಯೆಹೋವ ದೇವರ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ಮಾಡಿಸಲಿಲ್ಲವೋ? ನಾನು ಹೇಳಿದ ಮಾತುಒಳ್ಳೆಯದೆಂದು ನೀನು ಹೇಳಲಿಲ್ಲವೋ?</verse>
				<verse number="43">ನೀನು ಯೆಹೋವ ದೇವರ ಆಣೆಯನ್ನೂ, ನಾನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನೂ ನೀನು ಕೈಗೊಳ್ಳದೆ ಇದ್ದದ್ದೇನು?” ಎಂದನು.</verse>
				<verse number="44">ಅರಸನು ಶಿಮ್ಮಿಗೆ, “ನೀನು ನನ್ನ ತಂದೆ ದಾವೀದನಿಗೆ ಮಾಡಿದ ಕೇಡನ್ನು ನಿನ್ನ ಹೃದಯವು ತಿಳಿದಿದೆ. ಯೆಹೋವ ದೇವರು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವರು.</verse>
				<verse number="45">ಆದರೆ ಅರಸನಾದ ಸೊಲೊಮೋನನಿಗೆ ಆಶೀರ್ವಾದವಾಗಲಿ. ದಾವೀದನ ಸಿಂಹಾಸನವು ಯೆಹೋವ ದೇವರ ಮುಂದೆ ಯುಗಯುಗಾಂತರಕ್ಕೂ ಸ್ಥಿರವಾಗಿರುವುದು,” ಎಂದನು.</verse>
				<verse number="46">ಆಗ ಅರಸನಾದ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನಿಗೆ ಆಜ್ಞಾಪಿಸಿದ್ದರಿಂದ, ಅವನು ಹೊರಟು ಹೋಗಿ ಶಿಮ್ಮಿಯ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರವಾಯಿತು.</verse>
			</chapter>
			<chapter number="3">
				<verse number="1">ಸೊಲೊಮೋನನು ಈಜಿಪ್ಟಿನ ಅರಸನಾದ ಫರೋಹನ ಸಂಗಡ ಬಂಧುತ್ವ ಮಾಡಿ, ಫರೋಹನ ಮಗಳನ್ನು ಮದುವೆಮಾಡಿಕೊಂಡನು. ಅವನು ತನ್ನ ಮನೆಯನ್ನೂ, ಯೆಹೋವ ದೇವರ ಆಲಯವನ್ನೂ, ಯೆರೂಸಲೇಮಿನ ಗೋಡೆಯನ್ನೂ, ಸುತ್ತಲೂ ಕಟ್ಟಿ ತೀರಿಸುವ ಮಟ್ಟಿಗೂ ಅವಳನ್ನು ದಾವೀದನ ಪಟ್ಟಣದಲ್ಲಿ ತಂದು ಇಟ್ಟನು.</verse>
				<verse number="2">ಆ ಕಾಲದವರೆಗೂ ಯೆಹೋವ ದೇವರ ಹೆಸರಿಗಾಗಿ ಆಲಯ ಇರಲಿಲ್ಲ. ಆದುದರಿಂದ, ಜನರು ಎತ್ತರದ ಸ್ಥಳಗಳಲ್ಲಿ ಬಲಿ ಅರ್ಪಿಸುತ್ತಿದ್ದರು.</verse>
				<verse number="3">ಸೊಲೊಮೋನನು ಯೆಹೋವ ದೇವರನ್ನು ಪ್ರೀತಿಸಿ, ತನ್ನ ತಂದೆ ದಾವೀದನ ಕಟ್ಟಳೆಯಲ್ಲಿ ನಡೆಯುತ್ತಾ ಇದ್ದನು. ಆದರೂ ತಾನು ಎತ್ತರ ಸ್ಥಳಗಳಲ್ಲಿ ಬಲಿಯನ್ನೂ, ಧೂಪವನ್ನೂ ಅರ್ಪಿಸುತ್ತಾ ಇದ್ದನು.</verse>
				<verse number="4">ಗಿಬ್ಯೋನಿನ ಅತಿಮುಖ್ಯವಾದ ಉನ್ನತ ಸ್ಥಳಕ್ಕೆ ಅರಸನಾದ ಸೊಲೊಮೋನನು ಬಲಿಗಳನ್ನರ್ಪಿಸಲು ಹೋಗಿ, ಆ ಬಲಿಪೀಠದ ಮೇಲೆ ಸಾವಿರ ದಹನಬಲಿಗಳನ್ನು ಅರ್ಪಿಸಿದನು.</verse>
				<verse number="5">ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿಯಲ್ಲಿ ಸ್ವಪ್ನದೊಳಗೆ ಯೆಹೋವ ದೇವರು ಸೊಲೊಮೋನನಿಗೆ ಕಾಣಿಸಿಕೊಂಡರು. ದೇವರು ಅವನಿಗೆ, “ನಾನು ನಿನಗೆ ಏನು ವರ ಕೊಡಬೇಕು? ಕೇಳಿಕೋ,” ಎಂದರು.</verse>
				<verse number="6">ಅದಕ್ಕೆ ಸೊಲೊಮೋನನು, “ನನ್ನ ತಂದೆಯಾಗಿರುವ ನಿಮ್ಮ ಸೇವಕನಾದ ದಾವೀದನು ನಿಮ್ಮ ಮುಂದೆ ನೀತಿಯಿಂದಲೂ, ಯಥಾರ್ಥವಾದ ಹೃದಯವುಳ್ಳವನಾಗಿಯೂ ನಡೆದದ್ದರಿಂದ, ನೀವು ಅವನಿಗೆ ಮಹಾಕರುಣೆಯನ್ನು ತೋರಿಸಿದ್ದೀರಿ. ಈ ಮಹಾಕರುಣೆಯನ್ನು ಮುಂದುವರೆಸುತ್ತಾ ಈ ದಿನ ಅವನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಮಗನನ್ನು ಕೊಟ್ಟಿದ್ದೀರಿ.</verse>
				<verse number="7">“ಈಗ ನನ್ನ ದೇವರಾದ ಯೆಹೋವ ದೇವರೇ, ನೀವು ನನ್ನ ತಂದೆ ದಾವೀದನಿಗೆ ಬದಲಾಗಿ ನಿಮ್ಮ ಸೇವಕನನ್ನು ಅರಸನನ್ನಾಗಿ ಮಾಡಿದ್ದೀರಿ. ಆದರೆ ನಾನು ಚಿಕ್ಕ ಬಾಲಕನಾಗಿದ್ದು, ನನ್ನ ಕರ್ತವ್ಯವನ್ನು ಹೇಗೆ ನಿರ್ವಹಿಸಬೇಕೆಂದು ತಿಳಿದಿಲ್ಲ.</verse>
				<verse number="8">ಇದಲ್ಲದೆ ನಿಮ್ಮ ಸೇವಕನಾದ ನಾನು ನೀವು ಆಯ್ದುಕೊಂಡಂಥ ಅಸಂಖ್ಯಾತ ಜನರ ಮಧ್ಯದಲ್ಲಿ ಇದ್ದೇನೆ.</verse>
				<verse number="9">ಆದ್ದರಿಂದ ನಿಮ್ಮ ಜನರನ್ನು ಪರಿಪಾಲಿಸುವುದಕ್ಕೆ, ಒಳ್ಳೆಯದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ, ನಿಮ್ಮ ಸೇವಕನಿಗೆ ತಿಳುವಳಿಕೆಯುಳ್ಳ ಹೃದಯವನ್ನು ಕೊಡಬೇಕು. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?” ಎಂದನು.</verse>
				<verse number="10">ಸೊಲೊಮೋನನು ಕೇಳಿದ ಈ ಮಾತು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದಾಗಿತ್ತು.</verse>
				<verse number="11">ಆದ್ದರಿಂದ ದೇವರು ಅವನಿಗೆ, “ನೀನು ನಿನಗಾಗಿ ದೀರ್ಘಾಯುಷ್ಯ ಅಥವಾ ಸಂಪತ್ತನ್ನು ಕೇಳಲಿಲ್ಲ, ಅಥವಾ ನಿನ್ನ ಶತ್ರುಗಳ ಮರಣವನ್ನು ಕೇಳಿಲ್ಲ, ಆದರೆ ನ್ಯಾಯವನ್ನು ನಿರ್ವಹಿಸುವುದಕ್ಕಾಗಿ ನಿನಗೋಸ್ಕರ ವಿವೇಕವನ್ನು ಕೇಳಿದ್ದರಿಂದ,</verse>
				<verse number="12">ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ನಿನಗೆ ಜ್ಞಾನವನ್ನೂ, ವಿವೇಚನೆಯುಳ್ಳ ಹೃದಯವನ್ನೂ ಕೊಟ್ಟಿದ್ದೇನೆ. ನಿನಗೆ ಸಮನಾದ ಜ್ಞಾನಿಯು ಈ ಮುಂಚೆಯೂ ಇರಲಿಲ್ಲ, ನಿನ್ನ ತರುವಾಯವೂ ಇರುವುದಿಲ್ಲ.</verse>
				<verse number="13">ನೀನು ಕೇಳದ ಐಶ್ವರ್ಯವನ್ನೂ, ಘನವನ್ನೂ ಕೊಟ್ಟಿದ್ದೇನೆ. ಆದ್ದರಿಂದ ನಿನ್ನ ಸಮಸ್ತ ದಿವಸಗಳಲ್ಲಿ ನಿನ್ನ ಹಾಗೆ ಅರಸುಗಳಲ್ಲಿ ಒಬ್ಬನೂ ಇರುವುದಿಲ್ಲ.</verse>
				<verse number="14">ನೀನು, ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು, ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಕೈಗೊಂಡರೆ, ನಿನ್ನ ದಿವಸಗಳನ್ನು ಹೆಚ್ಚಿಸುವೆನು,” ಎಂದರು.</verse>
				<verse number="15">ತರುವಾಯ ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಸ್ವಪ್ನವೆಂದು ತಿಳಿದುಕೊಂಡನು. ಅವನು ಯೆರೂಸಲೇಮಿಗೆ ಬಂದು, ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು, ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ, ತನ್ನ ಸೇವಕರಿಗೆ ಔತಣವನ್ನು ಏರ್ಪಡಿಸಿದನು.</verse>
				<verse number="16">ಇಬ್ಬರು ವೇಶ್ಯೆಯರು ಅರಸನ ಬಳಿಗೆ ಬಂದು, ಅವನ ಮುಂದೆ ನಿಂತರು.</verse>
				<verse number="17">ಅವರಲ್ಲಿ ಒಬ್ಬಳು, “ನನ್ನ ಒಡೆಯನೇ, ನಾನೂ, ಈ ಹೆಣ್ಣು ಮಗಳು ಒಂದೇ ಮನೆಯಲ್ಲಿ ವಾಸವಾಗಿದ್ದೇವೆ.</verse>
				<verse number="18">ನಾನು ಅವಳ ಸಂಗಡ ಮನೆಯಲ್ಲಿರುವಾಗ, ಮಗುವನ್ನು ಹೆತ್ತೆನು. ನಾನು ಹೆತ್ತ ಮೂರು ದಿವಸಗಳ ತರುವಾಯ, ಈ ಹೆಣ್ಣು ಮಗಳು ಕೂಡ ಹೆತ್ತಳು. ನಾವು ಇಬ್ಬರೂ ಕೂಡಿಯೇ ಇದ್ದೆವು. ಮನೆಯಲ್ಲಿ ನಮ್ಮ ಇಬ್ಬರ ಹೊರತು ನಮ್ಮ ಸಂಗಡ ಮತ್ತ್ಯಾರೂ ಇಲ್ಲ.</verse>
				<verse number="19">“ಆದರೆ ಅವಳು ಕೂಸಿನ ಮೇಲೆ ಮಲಗಿದ್ದರಿಂದ, ರಾತ್ರಿಯಲ್ಲಿ ಆಕೆಯ ಮಗು ಸತ್ತು ಹೋಯಿತು.</verse>
				<verse number="20">ಇವಳು ಮಧ್ಯರಾತ್ರಿಯಲ್ಲಿ ಎದ್ದು, ನಿನ್ನ ದಾಸಿಯು ನಿದ್ರೆಗೈಯುತ್ತಿರುವಾಗ, ನನ್ನ ಹತ್ತಿರ ಮಲಗಿದ್ದ ನನ್ನ ಮಗನನ್ನು ತೆಗೆದುಕೊಂಡು, ಅದನ್ನು ತನ್ನ ಎದೆಯ ಮೇಲೆ ಮಲಗಿಸಿಕೊಂಡು, ತನ್ನ ಸತ್ತ ಮಗುವನ್ನು ನನ್ನ ಎದೆಯ ಮೇಲೆ ಮಲಗಿಸಿದಳು.</verse>
				<verse number="21">ಉದಯದಲ್ಲಿ ನನ್ನ ಕೂಸಿಗೆ ಹಾಲು ಕುಡಿಸಲು ಎದ್ದಾಗ, ಅದು ಸತ್ತಿತ್ತು! ಉದಯದಲ್ಲಿ ಅದನ್ನು ಕಂಡಾಗ, ಅದು ನಾನು ಹೆತ್ತ ಮಗುವಾಗಿರಲಿಲ್ಲ,” ಎಂದಳು.</verse>
				<verse number="22">ಆಗ ಆ ಬೇರೆ ಹೆಣ್ಣು ಮಗಳು, “ಇಲ್ಲ ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು,” ಎಂದಳು. ಮೊದಲನೆಯವಳು, “ಹಾಗಲ್ಲ, ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು,” ಎಂದಳು. ಹೀಗೆ ಅವರು ಅರಸನ ಮುಂದೆ ವಾದಿಸಿದರು.</verse>
				<verse number="23">ಆಗ ಅರಸನು, “ ‘ಇವಳು ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು,’ ಎನ್ನುತ್ತಾಳೆ. ಅವಳು, ಹಾಗಲ್ಲ, ‘ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು,’ ಎನ್ನುತ್ತಾಳೆ,” ಎಂದು ಹೇಳಿ,</verse>
				<verse number="24">ಅರಸನು, “ಖಡ್ಗವನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದನು. ಅವರು ಖಡ್ಗವನ್ನು ಅರಸನ ಬಳಿಗೆ ತಂದರು.</verse>
				<verse number="25">ಆಗ ಅರಸನು, “ಬದುಕಿರುವ ಕೂಸನ್ನು ಎರಡು ತುಂಡಾಗಿ ಕಡಿದು, ಇವಳಿಗೆ ಅರ್ಧ ಪಾಲನ್ನೂ, ಅವಳಿಗೆ ಅರ್ಧ ಪಾಲನ್ನೂ ಕೊಡಿರಿ,” ಎಂದನು.</verse>
				<verse number="26">ಆಗ ಬದುಕಿರುವ ಕೂಸಿನ ತಾಯಿಯಾಗಿರುವವಳ ಕರುಳುಗಳು ತನ್ನ ಮಗನಿಗಾಗಿ ಮರುಗಿದ್ದರಿಂದ ಅವಳು ಅರಸನಿಗೆ, “ನನ್ನ ಒಡೆಯನೇ, ಬದುಕಿರುವ ಕೂಸನ್ನು ಇವಳಿಗೆ ಕೊಡು, ಕೊಲ್ಲಬೇಡ,” ಎಂದಳು. ಆದರೆ, ಮತ್ತೊಬ್ಬಳು, ಅದು ನನಗಾಗಲಿ ನಿನಗಾಗಲಿ ಆಗಿರಬಾರದು, ಕಡಿಯಿರಿ. ಎಂದಳು.</verse>
				<verse number="27">ಆಗ ಅರಸನು ಉತ್ತರವಾಗಿ, “ಬದುಕಿರುವ ಕೂಸನ್ನು ಮೊದಲನೆಯವಳಿಗೆ ಕೊಡಿರಿ, ಕೊಲ್ಲಬೇಡಿರಿ, ಇವಳೇ ಅದರ ತಾಯಿ,” ಎಂದನು.</verse>
				<verse number="28">ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇಲರು ಕೇಳಿ, ಅರಸನಿಗೆ ಭಯಪಟ್ಟರು. ಏಕೆಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ಕಂಡರು.</verse>
			</chapter>
			<chapter number="4">
				<verse number="1">ಹೀಗೆ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿದ್ದನು.</verse>
				<verse number="2">ಅವನಿಗೆ ಇದ್ದ ಮುಖ್ಯ ಅಧಿಕಾರಿಗಳು ಯಾರೆಂದರೆ: ಚಾದೋಕನ ಮಗ ಅಜರ್ಯನು ಮುಖ್ಯಯಾಜಕನಾಗಿದ್ದನು.</verse>
				<verse number="3">ಶೀಷನ ಮಕ್ಕಳಾದ ಎಲೀಹೋರೆಫ್ ಹಾಗು ಅಹೀಯಾಹು ಎಂಬವರು ಕಾರ್ಯದರ್ಶಿಗಳು. ಅಹೀಲೂದನ ಮಗನಾದ ಯೆಹೋಷಾಫಾಟನು ಅವನ ಲೇಖಕ.</verse>
				<verse number="4">ಯೆಹೋಯಾದಾವನ ಮಗ ಬೆನಾಯನು ಸೈನ್ಯದ ಅಧಿಪತಿಯು, ಚಾದೋಕನೂ, ಅಬಿಯಾತರನೂ ಯಾಜಕರು.</verse>
				<verse number="5">ನಾತಾನನ ಮಗ ಅಜರ್ಯನು ಅಧಿಪತಿಗಳ ಮೇಲ್ವಿಚಾರಕನು. ನಾತಾನನ ಮಗ ಜಾಬೂದನು ಯಾಜಕನು ಹಾಗು ಅರಸನ ವೈಯಕ್ತಿಕ ಸಲಹೆಗಾರನು.</verse>
				<verse number="6">ಅಹಿಷಾರನು ರಾಜ್ಯ ಗೃಹಾಧಿಪತಿ. ಅಬ್ದನ ಮಗ ಅದೋನೀರಾಮನು ದಾಸರ ಮೇಲೆ ಉಸ್ತುವಾರಿಮಾಡಿಸುವವನಾಗಿದ್ದನು.</verse>
				<verse number="7">ಇದಲ್ಲದೆ ಅರಸನಿಗೂ, ಅವನ ಮನೆಗೂ ಆಹಾರವನ್ನು ಸಿದ್ಧಮಾಡಿಸುವುದಕ್ಕೋಸ್ಕರ ಸೊಲೊಮೋನನಿಗೆ ಸಮಸ್ತ ಇಸ್ರಾಯೇಲಿನ ಮೇಲೆ ಹನ್ನೆರಡು ಜಿಲ್ಲಾಧಿಕಾರಿಗಳು ಇದ್ದರು. ಪ್ರತಿಯೊಬ್ಬನೂ ತನಗೆ ವರುಷದಲ್ಲಿ ನೇಮಕವಾದ ತಿಂಗಳು ಬಂದಾಗ, ದವಸಧಾನ್ಯಗಳನ್ನು ಒದಗಿಸುತ್ತಿದ್ದನು.</verse>
				<verse number="8">ಅವರ ಹೆಸರುಗಳು, ಅವರ ಜಿಲ್ಲೆಗಳು: ಬೆನ್ ಹೂರ್ ಎಫ್ರಾಯೀಮ್ ಪರ್ವತ ಪ್ರದೇಶದ ಅಧಿಕಾರಿ.</verse>
				<verse number="9">ಬೆನ್ ಡೆಕೆರ್ ಮಾಕಾಚ್, ಶಾಲ್ಬೀಮ್, ಬೇತ್ ಷೆಮೆಷ್, ಏಲೋನ್ ಹಾಗು ಬೇತ್ ಹಾನಾನ್‌ಗಳಲ್ಲಿ ಅಧಿಕಾರಿ.</verse>
				<verse number="10">ಬೆನ್ ಹೆಸೆದ್ ಅರುಬ್ಬೋತದಲ್ಲಿ ಅಧಿಕಾರಿ. ಸೋಕೋ ಮತ್ತು ಹೇಫೆರಿನ ಎಲ್ಲಾ ಪ್ರದೇಶಗಳು ಅವನವಾಗಿದ್ದವು.</verse>
				<verse number="11">ಬೆನ್ ಅಬೀನಾದಾಬ್ ನಾಫೋತ್ ದೋರ್‌ದಲ್ಲಿ ಅಧಿಕಾರಿ. ಅವನು ಸೊಲೊಮೋನನ ಮಗಳಾದ ಟಾಫತಳನ್ನು ಮದುವೆಯಾಗಿದ್ದನು.</verse>
				<verse number="12">ಅಹೀಲೂದನ ಮಗ ಬಾಣಾ ಎಂಬವನು ತಾನಕ್, ಮೆಗಿದ್ದೋ, ಬೇತ್ ಷೆಯಾನಿನ ಎಲ್ಲಾ ಕಡೆಗಳಲ್ಲಿಯೂ ಆಳಿಕೆಮಾಡುತ್ತಿದ್ದನು. ಬೇತ್ ಶಾನ್ ಚಾರೆತಾನಿನ ಪಕ್ಕದಲ್ಲಿದ್ದ ಇಜ್ರೆಯೇಲ್ ಎಂಬ ಪಟ್ಟಣದ ಕೆಳಗಿತ್ತು. ಅವನ ಪ್ರಾಂತವು ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೆ ಯೊಕ್ಮೆಯಾಮಿನಲ್ಲಿ ಅಂತ್ಯಗೊಂಡಿತ್ತು.</verse>
				<verse number="13">ಬೆನ್ ಗೆಬೆರ್ ಗಿಲ್ಯಾದಿನ ರಾಮೋತ್ ಎಂಬ ಊರಿಗೆ ಅಧಿಕಾರಿಯಾಗಿದ್ದನು. ಈ ಗಿಲ್ಯಾದಿನ ಪ್ರಾಂತದಲ್ಲಿ ಮನಸ್ಸೆಯ ಮಗ ಯಾಯೀರನ ಗ್ರಾಮಗಳಿಗೂ, ಬಾಷಾನಿನಲ್ಲಿ ಪೌಳಿ ಗೋಡೆಗಳಿಂದಲೂ, ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲಾಗಿದ್ದ ಅರವತ್ತು ಪಟ್ಟಣಗಳಲ್ಲಿದ್ದ ಅರ್ಗೋಬ್ ಪ್ರದೇಶಕ್ಕೂ ಅಧಿಕಾರಿಯಾಗಿದ್ದನು.</verse>
				<verse number="14">ಇದ್ದೋ ಎಂಬವನ ಮಗನಾದ ಅಹೀನಾದಾಬ್ ಮಹನಯಿಮ್ ಎಂಬ ಸ್ಥಳಕ್ಕೆ ಅಧಿಕಾರಿ.</verse>
				<verse number="15">ಅಹೀಮಾಚ್ ನಫ್ತಾಲಿಯಲ್ಲಿ ಅಧಿಕಾರಿ. ಅವನಿಗೆ ಸೊಲೊಮೋನನ ಮಗಳಾದ ಬಾಸೆಮತ್ ಹೆಂಡತಿಯಾಗಿದ್ದಳು.</verse>
				<verse number="16">ಹೂಷೈಯ ಮಗ ಬಾಣಾ ಆಶೇರದಲ್ಲಿ ಮತ್ತು ಆಲೋತಿನಲ್ಲಿ ಅಧಿಕಾರಿ.</verse>
				<verse number="17">ಫಾರೂಹನ ಮಗ ಯೆಹೋಷಾಫಾಟನು ಇಸ್ಸಾಕಾರ್ ಪ್ರಾಂತದಲ್ಲಿ ಅಧಿಕಾರಿ.</verse>
				<verse number="18">ಏಲನ ಮಗ ಶಿಮ್ಮಿಯು ಬೆನ್ಯಾಮೀನ್ ಪ್ರಾಂತದಲ್ಲಿ ಅಧಿಕಾರಿ.</verse>
				<verse number="19">ಊರಿಯನ ಮಗ ಗೆಬೆರನು ಗಿಲ್ಯಾದಿನಲ್ಲಿ ಅಧಿಕಾರಿ. ಅಮೋರಿಯರ ಅರಸನಾದ ಸೀಹೋನನ ದೇಶಕ್ಕೂ ಬಾಷಾನಿನ ಅರಸನಾದ ಓಗನ ದೇಶಕ್ಕೂ ಅವನೊಬ್ಬನೇ ಅಧಿಪತಿಯಾಗಿದ್ದನು.</verse>
				<verse number="20">ಯೆಹೂದ ಮತ್ತು ಇಸ್ರಾಯೇಲಿನ ಜನರು ಸಮುದ್ರದ ಮರಳಿನ ಹಾಗೆ ಅಸಂಖ್ಯಾತರಾದರು. ಅವರು ಉಂಡು ಕುಡಿದು ಸುಖದಿಂದ ಇದ್ದರು.</verse>
				<verse number="21">ಇದಲ್ಲದೆ ಸೊಲೊಮೋನನು ಯೂಫ್ರೇಟೀಸ್ ಮೊದಲುಗೊಂಡು ಫಿಲಿಷ್ಟಿಯರ ದೇಶ ಮತ್ತು ಈಜಿಪ್ಟಿನ ಮೇರೆಯವರೆಗೂ ಇರುವ ಸಮಸ್ತ ರಾಜ್ಯಗಳನ್ನು ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳೆಲ್ಲಾ ಕಪ್ಪಗಳನ್ನು ಕೊಡುವವರಾಗಿ ಅವನಿಗೆ ಅಧೀನರಾಗಿದ್ದರು.</verse>
				<verse number="22">ಸೊಲೊಮೋನನು ಒಂದು ದಿನದ ಭೋಜನಕ್ಕೆ ಕೊಡುತ್ತಿದ್ದ ಆಹಾರ ಪದಾರ್ಥಗಳು 5,000 ಕಿಲೋಗ್ರಾಂ ನಯವಾದ ಗೋಧಿಯ ಹಿಟ್ಟು, 10,000 ಕಿಲೋಗ್ರಾಂ ಜವೆಗೋಧಿ,</verse>
				<verse number="23">ಕೊಬ್ಬಿದ ಎತ್ತುಗಳು ಹತ್ತು, ಮೇಯುವ ಎತ್ತುಗಳು ಇಪ್ಪತ್ತು, ಕುರಿಗಳು ನೂರು. ಇವುಗಳ ಹೊರತಾಗಿ ದುಪ್ಪಿಗಳೂ, ಜಿಂಕೆಗಳೂ, ಕೆಂದ ಜಿಂಕೆಗಳೂ, ಕೊಬ್ಬಿದ ಕೋಳಿಗಳೂ ಆಗಿದ್ದವು.</verse>
				<verse number="24">ಯೂಫ್ರೇಟೀಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗೂ, ನದಿಯ ಈಚೆಯಲ್ಲಿರುವ ಸಮಸ್ತ ಅರಸರ ಮೇಲೆ ಅವನು ಅಧಿಕಾರಿಯಾಗಿದ್ದನು. ಇದಲ್ಲದೆ ಅವನಿಗೆ ಸುತ್ತಲಿರುವ ಸಮಸ್ತ ದಿಕ್ಕಿನಲ್ಲಿ ಅವನಿಗೆ ಸಮಾಧಾನವಿತ್ತು.</verse>
				<verse number="25">ಹೀಗೆಯೇ ದಾನ್ ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ, ಸೊಲೊಮೋನನ ಸಮಸ್ತ ದಿವಸಗಳಲ್ಲಿ ಯೆಹೂದ ಮತ್ತು ಇಸ್ರಾಯೇಲಿನಲ್ಲಿರುವ ಪ್ರತಿಯೊಬ್ಬ ಮನುಷ್ಯನು ತನ್ನ ದ್ರಾಕ್ಷಿಬಳ್ಳಿಯ ಕೆಳಗೂ, ತನ್ನ ಅಂಜೂರದ ಮರದ ಕೆಳಗೂ ಸುರಕ್ಷಿತವಾಗಿ ವಾಸವಾಗಿದ್ದರು.</verse>
				<verse number="26">ಸೊಲೊಮೋನನಿಗೆ ತನ್ನ ರಥಗಳಿಗೋಸ್ಕರ ನಲವತ್ತು ಸಾವಿರ ಕುದುರೆಗಳಿಗೆ ಸ್ಥಳವಿತ್ತು, ಹನ್ನೆರಡು ಸಾವಿರ ರಾಹುತರೂ ಇದ್ದರು.</verse>
				<verse number="27">ಆ ಅಧಿಪತಿಗಳು ತಮಗೆ ನೇಮಕವಾದ ತಿಂಗಳಲ್ಲಿ ಅರಸನಾದ ಸೊಲೊಮೋನನಿಗೋಸ್ಕರವೂ, ಅರಸನ ಮೇಜಿಗೆ ಬರುವವರೆಲ್ಲರಿಗೋಸ್ಕರವೂ ಸಿದ್ಧಮಾಡಿದ್ದರು. ಅವರಿಗೆ ಕೊರತೆಯಾದದ್ದು ಒಂದೂ ಇರಲಿಲ್ಲ.</verse>
				<verse number="28">ಹೀಗೆಯೇ ಪ್ರತಿಯೊಬ್ಬನು ತನ್ನ ನೇಮಕದ ಪ್ರಕಾರ ಕುದುರೆಗಳಿಗೋಸ್ಕರವೂ, ಸವಾರಿ ಒಂಟೆಗಳಿಗೋಸ್ಕರವೂ, ಅವುಗಳ ಸ್ಥಳಕ್ಕೆ ಜವೆಗೋಧಿಯನ್ನೂ, ಹುಲ್ಲನ್ನೂ ತಂದರು.</verse>
				<verse number="29">ದೇವರು ಸೊಲೊಮೋನನಿಗೆ ಅತ್ಯಧಿಕವಾಗಿ ಜ್ಞಾನವನ್ನೂ, ಗ್ರಹಿಕೆಯನ್ನೂ, ಸಮುದ್ರ ತೀರದಲ್ಲಿಯ ಮರಳಿನ ಹಾಗೆಯೇ ವಿವೇಕವನ್ನೂ ಕೊಟ್ಟರು.</verse>
				<verse number="30">ಸೊಲೊಮೋನನ ಜ್ಞಾನವು ಮೂಡಣ ದೇಶದ ಸಮಸ್ತರ ಜ್ಞಾನಕ್ಕಿಂತಲೂ, ಈಜಿಪ್ಟಿನ ಸಮಸ್ತರ ಜ್ಞಾನಕ್ಕಿಂತಲೂ ಅಧಿಕವಾಗಿತ್ತು.</verse>
				<verse number="31">ಜೇರಹನ ಮಗನಾದ ಏತಾನನು, ಮಹೋಲನ ಮಕ್ಕಳಾದ ಹೇಮಾನನು, ಕಲ್ಕೋಲನು, ದರ್ದನು ಮೊದಲಾದ ಸಮಸ್ತ ಮನುಷ್ಯರಿಗಿಂತಲೂ ಅವನು ಜ್ಞಾನಿಯಾಗಿದ್ದನು. ಸುತ್ತಲಿರುವ ಸಕಲ ದೇಶಗಳಲ್ಲಿ ಅವನ ಕೀರ್ತಿ ಇತ್ತು.</verse>
				<verse number="32">ಅವನು ಮೂರು ಸಾವಿರ ಜ್ಞಾನೋಕ್ತಿಗಳನ್ನು ಹೇಳಿದನು. ಅವನ ಹಾಡುಗಳು ಸಾವಿರದ ಐದು.</verse>
				<verse number="33">ಅವನು ಮರಗಳನ್ನು ಕುರಿತು ಲೆಬನೋನಿನಲ್ಲಿರುವ ದೇವದಾರು ಮರ ಮೊದಲುಗೊಂಡು ಗೋಡೆಯ ಮೇಲೆ ಬೆಳೆಯುವ ಹಿಸ್ಸೋಪಿನವರೆಗೂ ಹೇಳಿದನು. ಇದಲ್ಲದೆ ಮೃಗಗಳನ್ನು ಕುರಿತೂ, ಪಕ್ಷಿಗಳನ್ನು ಕುರಿತೂ, ಕ್ರಿಮಿಗಳನ್ನು ಕುರಿತೂ, ಮೀನುಗಳನ್ನು ಕುರಿತೂ ಪ್ರಸ್ತಾಪಿಸಬಲ್ಲವನಾಗಿದ್ದನು.</verse>
				<verse number="34">ಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು.</verse>
			</chapter>
			<chapter number="5">
				<verse number="1">ಸೊಲೊಮೋನನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕ ಪಡೆದಿದ್ದಾನೆಂದು ಟೈರಿನ ಅರಸನಾದ ಹೀರಾಮನು ಕೇಳಿದಾಗ, ಅವನು ತನ್ನ ರಾಜದೂತರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಏಕೆಂದರೆ ಹೀರಾಮನು ಯಾವಾಗಲೂ ದಾವೀದನಿಗೆ ಆಪ್ತಮಿತ್ರನಾಗಿದ್ದನು.</verse>
				<verse number="2">ಸೊಲೊಮೋನನು ರಾಜದೂತರ ಮುಖಾಂತರ ಹೀರಾಮನಿಗೆ ಈ ಸಂದೇಶವನ್ನು ಕಳುಹಿಸಿದನು:</verse>
				<verse number="3">“ನನ್ನ ತಂದೆ ದಾವೀದನು ತನ್ನ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸಲಾರದೆ ಇದ್ದನೆಂದು ನೀನು ಬಲ್ಲೆ. ಏಕೆಂದರೆ ಯೆಹೋವ ದೇವರು ಅವನ ಶತ್ರುಗಳನ್ನು ಅವನ ಪಾದದ ಕೆಳಗೆ ಹಾಕುವವರೆಗೂ, ಅವನ ಸುತ್ತಲಿರುವ ಸಮಸ್ತ ದಿಕ್ಕುಗಳಲ್ಲಿ ಯುದ್ಧ ಉಂಟಾಯಿತು.</verse>
				<verse number="4">ಆದರೆ ಈಗ ನನ್ನ ದೇವರಾದ ಯೆಹೋವ ದೇವರು, ಶತ್ರುವಿನಿಂದ ತಗಲುವ ಕೇಡು ಒಂದಾದರೂ ಇಲ್ಲದ ಹಾಗೆ, ಸಮಸ್ತ ದಿಕ್ಕುಗಳಲ್ಲಿ ನನಗೆ ಸಮಾಧಾನವನ್ನು ಕೊಟ್ಟಿದ್ದಾರೆ.</verse>
				<verse number="5">ಆದ್ದರಿಂದ, ನನ್ನ ದೇವರಾದ ಯೆಹೋವ ದೇವರ ಹೆಸರಿಗೆ ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಯೆಹೋವ ದೇವರು ನನ್ನ ತಂದೆಯಾದ ದಾವೀದನಿಗೆ, ‘ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಕುಳ್ಳಿರಿಸುವ ನಿನ್ನ ಮಗನೇ ನನ್ನ ಹೆಸರಿಗೆ ದೇವಾಲಯವನ್ನು ಕಟ್ಟಿಸುವನು,’ ಎಂದು ಹೇಳಿದ್ದಾರಲ್ಲವೇ.</verse>
				<verse number="6">“ಆದ್ದರಿಂದ ನೀನು ನನಗೋಸ್ಕರ ಲೆಬನೋನಿನಲ್ಲಿ ದೇವದಾರು ಮರಗಳನ್ನು ಕಡಿಯಲು ಆಜ್ಞಾಪಿಸು. ನನ್ನ ಸೇವಕರೂ, ನಿನ್ನ ಸೇವಕರೂ ಕೂಡ ಇರಲಿ. ನೀನು ಹೇಳಿದ ಪ್ರಕಾರ, ನಿನ್ನ ಸೇವಕರ ಕೂಲಿಯನ್ನು ಕೊಡುತ್ತೇನೆ. ಏಕೆಂದರೆ ನಮ್ಮಲ್ಲಿ ಸೀದೋನ್ಯರ ಹಾಗೆ ಮರವನ್ನು ಕಡಿಯಲು ತಿಳಿದವರಿಲ್ಲ ಎಂದು ನೀನು ಬಲ್ಲೆ,” ಎಂದು ಹೇಳಿದನು.</verse>
				<verse number="7">ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹು ಸಂತೋಷಪಟ್ಟು, “ಈ ಮಹಾಜನರ ಮೇಲೆ ಜ್ಞಾನವುಳ್ಳ ಮಗನನ್ನು ದಾವೀದನಿಗೆ ಕೊಟ್ಟ ಯೆಹೋವ ದೇವರಿಗೆ ಇಂದು ಸ್ತೋತ್ರವಾಗಲಿ,” ಎಂದನು.</verse>
				<verse number="8">ಹೀರಾಮನು ಸೊಲೊಮೋನನಿಗೆ ಸಂದೇಶವನ್ನು ಕಳುಹಿಸಿ, “ನೀನು ಹೇಳಿ ಕಳುಹಿಸಿದ್ದನ್ನು ನಾನು ಕೇಳಿದ್ದೇನೆ. ದೇವದಾರು ಮರಗಳ ವಿಷಯವೂ, ತುರಾಯಿ ಮರಗಳ ವಿಷಯವೂ ನೀನು ಇಚ್ಛಿಸಿದ್ದನ್ನೆಲ್ಲಾ ನಾನು ಮಾಡುವೆನು.</verse>
				<verse number="9">ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತಂದಮೇಲೆ, ನನಗೆ ನೇಮಿಸಿದ ಸ್ಥಳಕ್ಕೆ ತೆಪ್ಪವನ್ನು ಕಟ್ಟಿ, ಸಮುದ್ರದಿಂದ ಕಳುಹಿಸಿ, ಅಲ್ಲಿ ಒಪ್ಪಿಸುವ ಹಾಗೆ ಮಾಡುವೆನು. ನೀನು ಅವುಗಳನ್ನು ತೆಗೆದುಕೊಂಡು ನನ್ನ ಮನೆಯವರಿಗೊಸ್ಕರ ಆಹಾರವನ್ನು ಕೊಟ್ಟು, ನನ್ನ ಇಚ್ಛೆಯನ್ನು ತೀರಿಸುವೆ,” ಎಂದನು.</verse>
				<verse number="10">ಹೀಗೆಯೇ ಹೀರಾಮನು ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸೊಲೊಮೋನನ ಇಚ್ಛೆಯ ಪ್ರಕಾರವೆಲ್ಲಾ ಕೊಟ್ಟನು.</verse>
				<verse number="11">ಸೊಲೊಮೋನನು ಹೀರಾಮನಿಗೆ ಅವನ ಮನೆಯವರ ಆಹಾರಕ್ಕೋಸ್ಕರ ಸುಮಾರು ಮೂರು ಸಾವಿರ ಆರನೂರು ಟನ್ ಗೋಧಿಯನ್ನೂ, ನಾಲ್ಕು ಲಕ್ಷ ನಲವತ್ತು ಸಾವಿರ ಲೀಟರ್ ಅಪ್ಪಟವಾದ ಎಣ್ಣೆಯನ್ನೂ ಕೊಟ್ಟನು. ಹೀಗೆಯೇ ಸೊಲೊಮೋನನು ಹೀರಾಮನಿಗೆ ಪ್ರತಿ ವರುಷ ಕೊಡುತ್ತಾ ಇದ್ದನು.</verse>
				<verse number="12">ಇದಲ್ಲದೆ ಯೆಹೋವ ದೇವರು ಸೊಲೊಮೋನನಿಗೆ ವಾಗ್ದಾನ ಮಾಡಿದಂತೆ ಜ್ಞಾನವನ್ನು ಕೊಟ್ಟರು. ಹೀರಾಮನಿಗೂ, ಸೊಲೊಮೋನನಿಗೂ ಸಮಾಧಾನ ಉಂಟಾಗಿತ್ತು. ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.</verse>
				<verse number="13">ಆಗ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲರೊಳಗಿಂದ ಆಳುಗಳನ್ನು ತೆಗೆದುಕೊಂಡನು. ಆ ಆಳುಗಳ ಲೆಕ್ಕವು ಮೂವತ್ತು ಸಾವಿರ ಜನವಾಗಿತ್ತು.</verse>
				<verse number="14">ಅವನು ಅವರನ್ನು ಲೆಬನೋನಿಗೆ ಕಳುಹಿಸಿದನು. ತಿಂಗಳು ತಿಂಗಳಿಗೂ ನೇಮಕದ ಪ್ರಕಾರ, ಹತ್ತು ಸಾವಿರ ಜನರನ್ನು ಕಳುಹಿಸಿದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದು, ಎರಡು ತಿಂಗಳು ತಮ್ಮ ಮನೆಗಳಲ್ಲಿದ್ದರು. ಅದೋನೀರಾಮನು ಆಳುಗಳ ಮೇಲೆ ಯಜಮಾನನಾಗಿದ್ದನು.</verse>
				<verse number="15">ಇದಲ್ಲದೆ ಸೊಲೊಮೋನನಿಗೆ ಹೊರೆ ಹೊರುವವರು ಎಪ್ಪತ್ತು ಸಾವಿರವೂ, ಬೆಟ್ಟಗಳಲ್ಲಿ ಕಲ್ಲುಕುಟಿಗರು ಎಂಬತ್ತು ಸಾವಿರವೂ ಇದ್ದರು.</verse>
				<verse number="16">ಇದರ ಹೊರತಾಗಿ ಸೊಲೊಮೋನನ ಮುಖ್ಯವಾದ ಅಧಿಪತಿಗಳು ಕೆಲಸದ ಮೇಲೆ ಇದ್ದರು. ಕೆಲಸ ಮಾಡುವ ಜನರ ಮೇಲೆ ಮೂರು ಸಾವಿರದ ಮುನ್ನೂರು ಮೇಸ್ತ್ರಿಗಳಿದ್ದರು.</verse>
				<verse number="17">ಅರಸನು ಆಜ್ಞಾಪಿಸಿದ್ದರಿಂದ ದೊಡ್ಡ ಕಲ್ಲುಗಳನ್ನೂ, ಬೆಲೆಯುಳ್ಳ ಕಲ್ಲುಗಳನ್ನೂ ದೇವಾಲಯ ಅಸ್ತಿವಾರವನ್ನು ಹಾಕಲು ಕೆತ್ತಿದ ಕಲ್ಲುಗಳನ್ನು ತಂದರು.</verse>
				<verse number="18">ಸೊಲೊಮೋನನ ಶಿಲ್ಪಕಾರರೂ, ಹೀರಾಮನ ಶಿಲ್ಪಕಾರರೂ, ಗೆಬಾಲ್ಯರೂ ಅವುಗಳನ್ನು ಕಡಿದು, ಆಲಯವನ್ನು ಕಟ್ಟುವುದಕ್ಕೆ ಕಲ್ಲುಗಳನ್ನೂ, ಮರಗಳನ್ನೂ ಸಿದ್ಧಮಾಡಿದರು.</verse>
			</chapter>
			<chapter number="6">
				<verse number="1">ಇಸ್ರಾಯೇಲರು ಈಜಿಪ್ಟ್ ದೇಶದಿಂದ ಬಂದ ನಾನೂರ ಎಂಬತ್ತನೆಯ ವರುಷದಲ್ಲಿ ಇಸ್ರಾಯೇಲಿನ ಮೇಲೆ ಸೊಲೊಮೋನನ ಆಳಿಕೆಯ ನಾಲ್ಕನೆಯ ವರ್ಷದ, ಎರಡನೆಯ ತಿಂಗಳಾದ ಜಿವ್ ತಿಂಗಳಲ್ಲಿ ಅವನು ಯೆಹೋವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿದನು.</verse>
				<verse number="2">ಅರಸನಾದ ಸೊಲೊಮೋನನು ಯೆಹೋವ ದೇವರಿಗೋಸ್ಕರ ಆಲಯವನ್ನು ಕಟ್ಟಿಸಿದನು, ಅದರ ಉದ್ದ ಸುಮಾರು 27 ಮೀಟರ್, ಅದರ ಅಗಲ 9 ಮೀಟರ್, ಅದರ ಎತ್ತರ 14 ಮೀಟರ್.</verse>
				<verse number="3">ಮಂದಿರದ ಮುಂದೆ ಮಂಟಪವಿತ್ತು. ಅದು ಆಲಯದ ಅಗಲದ ಪ್ರಕಾರ ಸುಮಾರು 9 ಮೀಟರ್ ಉದ್ದವಾಗಿತ್ತು. ಆಲಯದ ಮುಂದೆ ಇರುವ ಅದರ ಅಗಲವು 4.5 ಮೀಟರ್.</verse>
				<verse number="4">ಅವನು ಸಣ್ಣ ಜಾಲರಿಗಳುಳ್ಳ ಕಿಟಿಕಿಗಳನ್ನು ಆಲಯಕ್ಕೆ ಮಾಡಿಸಿದನು.</verse>
				<verse number="5">ಕಟ್ಟಡದ ಹೊರಗಿನ ಗೋಡೆಗಳ ಸುತ್ತಲೂ, ಸೊಲೊಮೋನನು ಅನೇಕ ಕೋಣೆಗಳ ಸಂಕೀರ್ಣವನ್ನು ಎರಡೂ ಬದಿಗಳಲ್ಲಿ ನಿರ್ಮಿಸಿದನು.</verse>
				<verse number="6">ಕೆಳಗಿರುವ ಕೊಠಡಿಯು 2.2 ಮೀಟರ್ ಅಗಲ, ಎರಡನೆಯದು 2.7 ಮೀಟರ್ ಅಗಲ, ಮೂರನೆಯದು 3.1 ಮೀಟರ್ ಅಗಲ. ಏಕೆಂದರೆ ತೊಲೆಗಳು ಆಲಯದ ಗೋಡೆಗಳಲ್ಲಿ ತಗಲದ ಹಾಗೆ ಆಲಯದ ಸುತ್ತಲೂ ಹೊರಗಡೆಯಲ್ಲಿ ನಿಲ್ಲುವ ಅಂತಸ್ತುಗಳನ್ನು ಕಟ್ಟಿಸಿದನು.</verse>
				<verse number="7">ಆಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಆಲಯವನ್ನು ಕಟ್ಟುತ್ತಿರುವಾಗ, ಅದರಲ್ಲಿ ಸುತ್ತಿಗೆ, ಉಳಿ, ಕಬ್ಬಿಣದ ಉಪಕರಣಗಳ ಶಬ್ದವೇ ಕೇಳಲಿಲ್ಲ.</verse>
				<verse number="8">ಮಧ್ಯ ಕೊಠಡಿಯ ಬಾಗಿಲು ಆಲಯದ ದಕ್ಷಿಣ ಭಾಗದಲ್ಲಿ ಇತ್ತು. ಅಲ್ಲಿಂದ ಮಧ್ಯ ಕೊಠಡಿಗೂ, ಮಧ್ಯ ಕೊಠಡಿಯಿಂದ ಮೂರನೆಯ ಕೊಠಡಿಗೂ ಹತ್ತಲು ಸುರುಳಿಯಾಕಾರದ ಮೆಟ್ಟಲುಗಳಿದ್ದವು.</verse>
				<verse number="9">ಹೀಗೆಯೇ ಅವನು ಆಲಯವನ್ನು ಕಟ್ಟಿ, ತೀರಿಸಿದ ತರುವಾಯ, ಆಲಯವನ್ನು ದೇವದಾರುಗಳ ತೊಲೆಗಳಿಂದಲೂ, ಹಲಗೆಗಳಿಂದಲೂ ಮುಚ್ಚಿಸಿದನು.</verse>
				<verse number="10">ಅವನು 2.2 ಮೀಟರ್ ಎತ್ತರವಾದ ಕೊಠಡಿಗಳನ್ನು ಆಲಯದ ಬಳಿಯಲ್ಲಿ ಸುತ್ತಲು ಕಟ್ಟಿಸಿದನು. ಅವು ಆಲಯದ ಮೇಲೆ ಇರಿಸಿದ ದೇವದಾರು ತೊಲೆಗಳ ಮೇಲೆ ನಿಂತಿದ್ದವು.</verse>
				<verse number="11">ಆಗ ಯೆಹೋವ ದೇವರ ವಾಕ್ಯವು ಸೊಲೊಮೋನನಿಗೆ ಬಂದಿತು,</verse>
				<verse number="12">“ನೀನು ಕಟ್ಟಿಸುವ ಈ ಆಲಯವನ್ನು ಕುರಿತು ನನ್ನ ಕಟ್ಟಳೆಗಳಲ್ಲಿ ನಡೆದು, ನನ್ನ ನ್ಯಾಯಗಳ ಪ್ರಕಾರಮಾಡಿ, ನನ್ನ ಸಕಲ ಆಜ್ಞೆಗಳಲ್ಲಿ ನಡೆದುಕೊಳ್ಳುವ ಹಾಗೆ ಅವುಗಳನ್ನು ಕೈಗೊಂಡರೆ, ನಾನು ನಿನ್ನ ತಂದೆ ದಾವೀದನಿಗೆ ಹೇಳಿದ ನನ್ನ ವಾಕ್ಯವನ್ನು ನಿನಗೆ ಸ್ಥಿರಮಾಡಿ,</verse>
				<verse number="13">ನನ್ನ ಜನವಾದ ಇಸ್ರಾಯೇಲರ ಕೈಬಿಡದೆ, ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿರುವೆನು,” ಎಂದರು.</verse>
				<verse number="14">ಸೊಲೊಮೋನನು ಆಲಯವನ್ನು ಕಟ್ಟಿಸಿ, ತೀರಿಸಿದನು.</verse>
				<verse number="15">ಆಲಯದ ಗೋಡೆಗಳ ಒಳಭಾಗಕ್ಕೆ ಮಂದಿರದ ನೆಲ ಮೊದಲುಗೊಂಡು ಗೋಡೆಗಳ ಮೇಲೆ ಮಾಳಿಗೆಯವರೆಗೂ ದೇವದಾರು ಹಲಗೆಗಳಿಂದ ಕಟ್ಟಿಸಿದನು. ಒಳಭಾಗದಲ್ಲಿ ಮರದಿಂದ ಮುಚ್ಚಿ, ಆಲಯದ ನೆಲವನ್ನು ತುರಾಯಿ ಮರಗಳ ಹಲಗೆಗಳಿಂದ ಮುಚ್ಚಿದನು.</verse>
				<verse number="16">ಅವನು ಆಲಯದ ಕಡೆಗಳಲ್ಲಿ 9 ಮೀಟರ್ ನೆಲವನ್ನೂ, ಗೋಡೆಗಳನ್ನೂ, ದೇವದಾರುಗಳ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿ ಅದರ ಹಿಂದಿನ ಭಾಗವನ್ನು ಅತಿ ಪರಿಶುದ್ಧಸ್ಥಳದ ಅಂಗನ ಅಥವಾ ಮಹಾಪರಿಶುದ್ಧ ಸ್ಥಳವೆಂದು ಕಟ್ಟಿಸಿದನು.</verse>
				<verse number="17">ಅದರ ಮುಂದಿರುವ ಮಂದಿರವಾಗಿರುವ ಆಲಯ 18 ಮೀಟರ್ ಉದ್ದವಾಗಿತ್ತು.</verse>
				<verse number="18">ಆಲಯದ ಒಳಗಿರುವ ದೇವದಾರು ಮೊಗ್ಗುಗಳೂ, ಅರಳಿದ ಹೂವುಗಳೂ ಕೆತ್ತಿದ ಕೆಲಸಗಳಾಗಿದ್ದವು. ಒಂದು ಕಲ್ಲಾದರೂ ಕಾಣಿಸದ ಹಾಗೆ ಎಲ್ಲಾ ದೇವದಾರದ್ದಾಗಿತ್ತು.</verse>
				<verse number="19">ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಅಲ್ಲಿ ಇರಿಸುವುದಕ್ಕೆ ಆಲಯದ ಒಳಗೆ ದೈವೋಕ್ತಿಯ ಸ್ಥಾನವನ್ನು ಸಿದ್ಧಮಾಡಿಸಿದನು.</verse>
				<verse number="20">ದೈವೋಕ್ತಿಯ ಸ್ಥಾನದ ಮುಂಭಾಗದ ಪ್ರಮಾಣವು, 9 ಮೀಟರ್ ಉದ್ದ, 9 ಮೀಟರ್ ಅಗಲ, 9 ಮೀಟರ್ ಎತ್ತರ ಇತ್ತು. ಅದನ್ನು ಶುದ್ಧ ಬಂಗಾರದಿಂದ ಹೊದಿಸಿದನು. ದೇವದಾರು ಮರದ ಪೀಠವನ್ನು ಹಾಗೆಯೇ ಹೊದಿಸಿದನು.</verse>
				<verse number="21">ಸೊಲೊಮೋನನು ಆಲಯದ ಒಳಭಾಗವನ್ನು ಶುದ್ಧ ಬಂಗಾರದಿಂದ ಹೊದಿಸಿ, ದೈವೋಕ್ತಿಯ ಸ್ಥಾನದ ಮುಂದೆ ಬಂಗಾರದ ಸರಪಣಿಗಳಿಂದ ವಿಭಾಗವನ್ನು ಮಾಡಿ, ಅದನ್ನು ಬಂಗಾರದಿಂದ ಹೊದಿಸಿದನು.</verse>
				<verse number="22">ಅವನು ಆಲಯವನ್ನೆಲ್ಲಾ ಬಂಗಾರದಿಂದ ಹೊದಿಸಿ, ಸ್ಥಾನದ ಮುಂಭಾಗದಲ್ಲಿರುವ ಪೀಠವನ್ನೂ ಬಂಗಾರದಿಂದ ಹೊದಿಸಿದನು.</verse>
				<verse number="23">ಅವನು ದೈವೋಕ್ತಿಯ ಸ್ಥಾನದಲ್ಲಿ ಹಿಪ್ಪೇಮರಗಳಿಂದ ಎರಡು ಕೆರೂಬಿಗಳನ್ನು ಮಾಡಿಸಿದನು. ಒಂದೊಂದು 4.4 ಮೀಟರ್ ಎತ್ತರವಾಗಿತ್ತು.</verse>
				<verse number="24">ಕೆರೂಬಿಗೆ ಇರುವ ಒಂದೊಂದು ರೆಕ್ಕೆ 2.2 ಮೀಟರ್ ಆಗಿತ್ತು. ಒಂದು ರೆಕ್ಕೆಯ ಕೊನೆ ಮೊದಲುಗೊಂಡು, ಮತ್ತೊಂದು ರೆಕ್ಕೆಯ ಕೊನೆಯವರೆಗೂ 4.4 ಮೀಟರ್ ಆಗಿತ್ತು.</verse>
				<verse number="25">ಎರಡನೆಯ ಕೆರೂಬಿಯು 4.4 ಮೀಟರ್. ಎರಡು ಕೆರೂಬಿಗಳಿಗೂ ಒಂದೇ ಅಳತೆಯೂ, ಒಂದೇ ಪ್ರಮಾಣವೂ ಇತ್ತು.</verse>
				<verse number="26">ಒಂದು ಕೆರೂಬಿಯು 4.4 ಮೀಟರ್ ಎತ್ತರವಾಗಿತ್ತು. ಎರಡನೆಯ ಕೆರೂಬಿಯು ಅದರ ಹಾಗೆಯೇ ಇತ್ತು.</verse>
				<verse number="27">ಆ ಕೆರೂಬಿಗಳನ್ನು ದೇವಾಲಯದ ಒಳ ಮನೆಯೊಳಗೆ ಇಟ್ಟನು. ಆ ಕೆರೂಬಿಗಳು ರೆಕ್ಕೆಗಳನ್ನು ಚಾಚಿರುವುದರಿಂದ ಒಂದು ರೆಕ್ಕೆಯ ಈ ಭಾಗದ ಗೋಡೆಯನ್ನೂ, ಮತ್ತೊಂದು ಕೆರೂಬಿಯ ರೆಕ್ಕೆಯು ಆ ಭಾಗದ ಗೋಡೆಯನ್ನೂ ಮುಟ್ಟಿತು. ಆಲಯದ ಮಧ್ಯದಲ್ಲಿ ಒಂದರ ರೆಕ್ಕೆ ಮತ್ತೊಂದರ ರೆಕ್ಕೆಯನ್ನು ಮುಟ್ಟಿತು.</verse>
				<verse number="28">ಆ ಕೆರೂಬಿಗಳನ್ನು ಬಂಗಾರದ ತಗಡುಗಳಿಂದ ಹೊದಿಸಿದನು.</verse>
				<verse number="29">ಅವನು ಆಲಯದ ಗೋಡೆಗಳ ಸುತ್ತಲೂ ಒಳ ಹೊರ ಭಾಗಗಳಲ್ಲಿ ಕೆರೂಬಿಗಳನ್ನೂ, ಖರ್ಜೂರದ ಗಿಡಗಳನ್ನೂ, ಅರಳಿದ ಹೂವುಗಳ ಚಿತ್ರಗಳನ್ನು ಕೆತ್ತಿಸಿದನು.</verse>
				<verse number="30">ಆಲಯದ ಒಳಗಿನ ಮತ್ತು ಹೊರಗಿನ ನೆಲವನ್ನು ಬಂಗಾರ ತಗಡುಗಳಿಂದ ಹೊದಿಸಿದನು.</verse>
				<verse number="31">ಅವನು ದೈವೋಕ್ತಿಯ ಸ್ಥಾನದ ಬಾಗಿಲಿಗೆ ಹಿಪ್ಪೇಮರಗಳಿಂದ ಜೋಡು ಬಾಗಿಲುಗಳನ್ನು ಮಾಡಿಸಿದನು. ಚೌಕಟ್ಟು ಪಂಚಕೋನಗಳುಳ್ಳದ್ದಾಗಿತ್ತು.</verse>
				<verse number="32">ಹಿಪ್ಪೇಮರದ ಆ ಜೋಡು ಬಾಗಿಲುಗಳ ಮೇಲೆ ಅವನು ಕೆರೂಬಿ, ಖರ್ಜೂರದ ವೃಕ್ಷ, ಅರಳಿದ ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ, ಆ ಕೆರೂಬಿಗಳನ್ನೂ, ಖರ್ಜೂರ ಗಿಡಗಳನ್ನೂ, ಬಂಗಾರದ ತಗಡಿನಿಂದ ಹೊದಿಸಿದನು.</verse>
				<verse number="33">ಅದೇ ರೀತಿಯಲ್ಲಿ, ಪರಿಶುದ್ಧಸ್ಥಳದ ಬಾಗಲಿಗೆ ಎಣ್ಣೇಮರದಿಂದ ಚತುಷ್ಕೋನದ ಚೌಕಟ್ಟನ್ನು ಮಾಡಿಸಿದನು.</verse>
				<verse number="34">ಅದಕ್ಕೆ ತುರಾಯಿ ಮರದ ಎರಡು ಬಾಗಿಲುಗಳನ್ನು ಇಡಿಸಿದನು. ಪ್ರತಿಯೊಂದು ಬಾಗಿಲು ಎರಡು ಭಾಗವುಳ್ಳದ್ದಾಗಿ ಮಡಚಬಹುದಾಗಿತ್ತು.</verse>
				<verse number="35">ಅದರ ಮೇಲೆ ಕೆರೂಬಿಗಳ, ಖರ್ಜೂರ ಗಿಡಗಳ, ಅರಳಿದ ಹೂವುಗಳ ಚಿತ್ರಗಳನ್ನು ಕೆತ್ತಿಸಿದನು. ಈ ಕೆತ್ತನೆಗಳ ಮೇಲೆ ಸಮವಾಗಿ ಬಂಗಾರದ ತಗಡನ್ನು ಹೊದಿಸಿದನು.</verse>
				<verse number="36">ಅವನು ಒಳಗಿನ ಅಂಗಳವನ್ನು ಕೆತ್ತಿದ ಕಲ್ಲುಗಳಿಂದ ಮೂರು ಸಾಲುಗಳಾಗಿಯೂ ದೇವದಾರಿನ ಸ್ತಂಭಗಳಿಂದ ಒಂದು ಸಾಲಾಗಿಯೂ ಕಟ್ಟಿಸಿದನು.</verse>
				<verse number="37">ನಾಲ್ಕನೆಯ ವರ್ಷದ ಜಿವ್ ತಿಂಗಳಲ್ಲಿ ಯೆಹೋವ ದೇವರ ಆಲಯದ ಅಸ್ತಿವಾರವು ಹಾಕಲಾಯಿತು.</verse>
				<verse number="38">ಹನ್ನೊಂದನೆಯ ವರ್ಷದ, ಎಂಟನೆಯ ತಿಂಗಳಾದ ಬೂಲ್ ಎಂಬ ಕಾರ್ತಿಕ ತಿಂಗಳಲ್ಲಿ ಆ ದೇವಾಲಯದ ಎಲ್ಲಾ ಭಾಗಗಳೂ ಯೋಜನೆಯ ಪ್ರಕಾರ ಕಟ್ಟಲಾಯಿತು. ಹೀಗೆ ಅವನು ಏಳು ವರುಷಗಳಲ್ಲಿ ಅದನ್ನು ಕಟ್ಟಿಸಿದನು.</verse>
			</chapter>
			<chapter number="7">
				<verse number="1">ಇದಲ್ಲದೆ ಸೊಲೊಮೋನನು ತನ್ನ ಅರಮನೆಯನ್ನು ಹದಿಮೂರು ವರ್ಷಗಳಲ್ಲಿ ಕಟ್ಟಿಸಿ ಮುಗಿಸಿದನು.</verse>
				<verse number="2">ಅವನು ಲೆಬನೋನಿನ ಅಡವಿಯ ಮನೆಯನ್ನು ಕಟ್ಟಿಸಿದನು. ಅದು 44 ಮೀಟರ್ ಉದ್ದ, 22 ಮೀಟರ್ ಅಗಲ, 13.5 ಮೀಟರ್ ಎತ್ತರವೂ ಆಗಿತ್ತು. ಅದು ನಾಲ್ಕು ಸಾಲು ದೇವದಾರು ಕಂಬಗಳ ಮೇಲೆ ಇತ್ತು. ದೇವದಾರು ತೊಲೆಗಳು ಕಂಬಗಳ ಮೇಲೆ ಇದ್ದವು.</verse>
				<verse number="3">ಒಂದೊಂದು ಸಾಲು ಹದಿನೈದು ಕಂಬಗಳಾಗಿ ನಲವತ್ತೈದು ಕಂಬಗಳ ಮೇಲೆ ಇರುವ ತೊಲೆಗಳು ದೇವದಾರಿನ ಹಲಿಗೆಗಳಿಂದ ಮಾಡಿದ ಮಾಳಿಗೆಯಿತ್ತು.</verse>
				<verse number="4">ಮೂರು ಸಾಲು ಕಿಟಕಿಗಳು ಇದ್ದವು. ಮೂರು ಸಾಲುಗಳಲ್ಲಿ ಬೆಳಕಿನ ಕಿಂಡಿಗಳಿದ್ದವು.</verse>
				<verse number="5">ಕಿಟಕಿಗಳಲ್ಲಿ ಬಾಗಿಲುಗಳೂ, ನಿಲುವುಗಳೂ ಎಲ್ಲಾ ಚೌಕವಾಗಿದ್ದವು. ಮೂರು ಮೂರು ಸಾಲುಗಳಲ್ಲಿ ಬೆಳಕಿನ ಕಿಂಡಿಗಳು ಎದುರೆದುರಾಗಿದ್ದವು.</verse>
				<verse number="6">22 ಮೀಟರ್ ಉದ್ದವೂ, 13.5 ಮೀಟರ್ ಅಗಲವೂ ಆದ ಮಂಟಪವನ್ನು ಸ್ತಂಭಗಳಿಂದ ಮಾಡಿಸಿದನು. ಈ ಮಂಟಪವೂ, ಸ್ತಂಭಗಳೂ, ತೊಲೆಗಳೂ, ಮನೆಯ ಸ್ತಂಭಗಳಿಗೂ, ತೊಲೆಗಳಿಗೂ ಎದುರೆದುರಾಗಿದ್ದವು.</verse>
				<verse number="7">ಅಲ್ಲಿ ನ್ಯಾಯತೀರಿಸಲು ನ್ಯಾಯಾಸನದ ಮಂಟಪವನ್ನು ಮಾಡಿ, ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ದೇವದಾರುಗಳನ್ನು ಹೊದಿಸಿದನು.</verse>
				<verse number="8">ತಾನು ವಾಸವಾಗಿರುವ ತನ್ನ ಅರಮನೆಯಲ್ಲಿ ಮಂಟಪದ ಒಳಭಾಗದಲ್ಲಿ ಈ ಕೆಲಸದ ಹಾಗೆಯೇ ಬೇರೆ ಒಂದು ಅಂಗಳವಿತ್ತು. ಇದಲ್ಲದೆ ಸೊಲೊಮೋನನು ತನ್ನ ಹೆಂಡತಿಯಾದ ಫರೋಹನ ಮಗಳಿಗೂ ಈ ಮಂಟಪದ ಹಾಗೆಯೇ ಇನ್ನೊಂದು ಮನೆಯನ್ನು ಕಟ್ಟಿಸಿದನು.</verse>
				<verse number="9">ಇವೆಲ್ಲಾ ಒಳಗೂ, ಹೊರಗೂ ಅಸ್ತಿವಾರಗಳು ಮೊದಲುಗೊಂಡು, ಕಡೇ ವರಸೆಯವರೆಗೂ ಹೊರಗಿರುವ ದೊಡ್ಡ ಅಂಗಳದ ಮಟ್ಟಿಗೂ, ಅಳತೆಯ ಪ್ರಕಾರ ಗರಗಸದಿಂದ ಕೊಯ್ಯಲಾದ ಬೆಲೆಯುಳ್ಳ ಕೆತ್ತಿದ ಕಲ್ಲುಗಳಾಗಿದ್ದವು.</verse>
				<verse number="10">ಅಸ್ತಿವಾರವು 4.5 ಮೀಟರ್ ಕಲ್ಲುಗಳೂ, 3.5 ಮೀಟರ್ ಕಲ್ಲುಗಳೂ ಬೆಲೆಯುಳ್ಳ ಕಲ್ಲುಗಳಾಗಿದ್ದವು. ಅವು ದೊಡ್ಡ ಕಲ್ಲುಗಳಾಗಿಯೂ ಇದ್ದವು.</verse>
				<verse number="11">ಅದರ ಮೇಲೆ ಕೆತ್ತಿದ ಕಲ್ಲುಗಳ ಅಳತೆಯ ಪ್ರಕಾರ ಬೆಲೆಯುಳ್ಳ ಕಲ್ಲುಗಳೂ, ದೇವದಾರು ತೊಲೆಗಳೂ ಇದ್ದವು.</verse>
				<verse number="12">ದೊಡ್ಡ ಅಂಗಳವು ಸುತ್ತಲೂ ಮೂರು ತರ ಕೆತ್ತಿದ ಕಲ್ಲುಗಳೂ, ಒಂದು ತರ ದೇವದಾರು ಮರದ ತೊಲೆಗಳೂ ಆಗಿದ್ದವು. ಯೆಹೋವ ದೇವರ ಆಲಯದ ಒಳ ಅಂಗಳಕ್ಕೂ, ಆಲಯದ ಮಂಟಪಕ್ಕೂ ಹಾಗೆಯೇ ಇದ್ದವು.</verse>
				<verse number="13">ಅರಸನಾದ ಸೊಲೊಮೋನನು ಹೂರಾಮನನ್ನು ಟೈರಿನಿಂದ ಕರೆಕಳುಹಿಸಿದನು.</verse>
				<verse number="14">ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು, ಅವನ ತಂದೆ ಟೈರ್ ಪಟ್ಟಣದ ಕಂಚುಗಾರನಾಗಿದ್ದನು. ಹೂರಾಮನು ಜ್ಞಾನದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಎಲ್ಲಾ ತರಹದ ಕಂಚಿನ ಕೆಲಸವನ್ನು ಮಾಡುವ ಅನುಭವಶಾಲಿಯಾಗಿದ್ದನು. ಅವನು ಅರಸನಾದ ಸೊಲೊಮೋನನ ಬಳಿಗೆ ಬಂದು, ಅವನ ಕೆಲಸವನ್ನೆಲ್ಲಾ ಮಾಡಿದನು.</verse>
				<verse number="15">ಅವನು ಎರಡು ಕಂಚಿನ ಸ್ತಂಭಗಳನ್ನು ಮಾಡಿದನು. ಒಂದೊಂದು ಸ್ತಂಭ 8 ಮೀಟರ್ ಉದ್ದ. ಒಂದೊಂದು ಸ್ತಂಭದ ಸುತ್ತಳತೆ 5.3 ಮೀಟರ್ ನೂಲಳತೆ ಇತ್ತು.</verse>
				<verse number="16">ಆ ಸ್ತಂಭಗಳ ಮೇಲೆ ಇರಿಸಲು ಕಂಚಿನ ಎರಕ ಹೊಯ್ದ ಎರಡು ಕುಂಭಗಳನ್ನು ಮಾಡಿದನು. ಒಂದೊಂದು ಕುಂಭವು 2.2 ಮೀಟರ್ ಎತ್ತರವಾಗಿತ್ತು.</verse>
				<verse number="17">ಸ್ತಂಭಗಳ ಕೊನೆಯಲ್ಲಿ ಇರುವ ಕುಂಭಗಳಿಗೆ ಜಾಲರಿಯ ಹಾಗೆ ಇರುವ ಹಣತೆಗಳೂ, ಸರಪಣಿಗಳ ಹಾಗಿರುವ ಗೊಂಡೆಗಳೂ ಇದ್ದವು. ಅವು ಒಂದೊಂದು ಕಂಬಕ್ಕೆ ಏಳು ಇದ್ದವು.</verse>
				<verse number="18">ಸ್ತಂಭಗಳಿಗೆ ಇನ್ನೂ ಮಾಡಿದ್ದು ಹೇಗೆಂದರೆ, ಕೊನೆಯಲ್ಲಿರುವ ಕುಂಭಗಳನ್ನು ಮುಚ್ಚುವ ಹಾಗೆ ಕುಂಭಗಳೊಳಗೆ ಒಂದೊಂದರಲ್ಲಿ ಜಾಲರಿ ಕೆಲಸದ ಮೇಲೆ ಸುತ್ತಲೂ ಎರಡು ಸಾಲು ದಾಳಿಂಬೆ ಹಣ್ಣುಗಳನ್ನು ಮಾಡಿದನು.</verse>
				<verse number="19">ಮಂಟಪದ ಮುಂದಿರುವ, ಆ ಸ್ತಂಭಗಳ ಕೊನೆಯ ಮೇಲಿರುವ ಕುಂಭಗಳು ತಾವರೆ ಪುಷ್ಪಗಳ ಕೃತಿ 2 ಮೀಟರ್ ಎತ್ತರವಾಗಿದ್ದವು.</verse>
				<verse number="20">ಎರಡು ಸ್ತಂಭಗಳ ಮೇಲಿರುವ ಕುಂಭಗಳಲ್ಲಿ ಉನ್ನತ ಜಾಲರಿಯ ಕೃತಿಯ ಸಮೀಪದಲ್ಲಿರುವ ಅದರ ಹೊಟ್ಟೆಯ ಎದುರಾಗಿ, ಇನ್ನೂರು ದಾಳಿಂಬೆಗಳು ಸಾಲುಗಳಾಗಿ ಸುತ್ತಲೂ ಇದ್ದವು. ಮತ್ತೊಂದು ಕುಂಭಕ್ಕೂ ಹೀಗೆಯೇ ಇತ್ತು.</verse>
				<verse number="21">ಆ ಸ್ತಂಭಗಳನ್ನು ಮಂದಿರದ ಮಂಟಪದ ಮುಂದೆ ನಿಲ್ಲಿಸಿದನು. ಅವನು ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ, ಎಡಗಡೆಯ ಸ್ತಂಭಕ್ಕೆ ಬೋವಾಜ್ ಎಂದೂ ಹೆಸರಿಟ್ಟನು.</verse>
				<verse number="22">ಸ್ತಂಭಗಳ ತಲೆಯಲ್ಲಿ ತಾವರೆ ಪುಷ್ಪಗಳ ಕೆಲಸವಾಗಿತ್ತು. ಹೀಗೆ ಸ್ತಂಭಗಳ ಕೃತಿಯು ಮುಗಿಯಿತು.</verse>
				<verse number="23">ಅನಂತರ ಅವನು ಸಮುದ್ರಪಾತ್ರೆ ಎಂದು ಕರೆಯಲಾಗುವ ಎರಕದ ದೊಡ್ಡ ಪಾತ್ರೆಯನ್ನು ಮಾಡಿಸಿದನು. ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಸುಮಾರು ನಾಲ್ಕು ಮೀಟರ್. ಅದರ ಎತ್ತರ ಸುಮಾರು ಎರಡು ಮೀಟರ್. ಸುತ್ತಳತೆ ಸುಮಾರು ಹದಿನಾಲ್ಕು ಮೀಟರಾಗಿತ್ತು.</verse>
				<verse number="24">ಅದರ ಅಂಚಿನ ಕೆಳಭಾಗದಲ್ಲಿ ಅದರ ಸುತ್ತಲೂ ಅಲಂಕಾರದ ಕಾಯಿಗಳಿದ್ದವು. ಅವು ಒಂದೊಂದು ಮೀಟರಿಗೆ ಹತ್ತರಂತೆ, ಆ ಕೊಳದ ಪಾತ್ರೆಯ ಸುತ್ತಲೂ ಇದ್ದವು. ಇದು ಎರಕ ಹೊಯ್ಯುವಾಗ ಅಲಂಕಾರದ ಕಾಯಿಗಳು ಎರಡು ಸಾಲಾಗಿ ಎರಕ ಹೊಯ್ದಿದ್ದವು.</verse>
				<verse number="25">ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ, ಮೂರು ಪಶ್ಚಿಮಕ್ಕೂ, ಮೂರು ದಕ್ಷಿಣಕ್ಕೂ, ಮೂರು ಪೂರ್ವಕ್ಕೂ ಮುಖಮಾಡಿಕೊಂಡಿದ್ದವು. ಆ ಕೊಳವು ಅವುಗಳ ಮೇಲೆ ಇತ್ತು. ಅವುಗಳ ಹಿಂಭಾಗಗಳೆಲ್ಲಾ ಒಳಮುಖವಾಗಿದ್ದವು.</verse>
				<verse number="26">ಅದರ ದಪ್ಪವು ಅಂಗೈ ಅಗಲದಷ್ಟಾಗಿಯೂ, ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ, ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ನಾಲ್ವತ್ತು ನಾಲ್ಕು ಸಾವಿರ ಲೀಟರ್ ನೀರನ್ನು ಹಿಡಿಯುತ್ತಿತ್ತು.</verse>
				<verse number="27">ಅವನು ಹತ್ತು ಕಂಚಿನ ಚಲಿಸುವ ಪೀಠಗಳನ್ನು ಮಾಡಿದನು. ಒಂದೊಂದು ಪೀಠವು 1.8 ಮೀಟರ್ ಉದ್ದವೂ, 1.8 ಮೀಟರ್ ಅಗಲವೂ, 1.4 ಮೀಟರ್ ಎತ್ತರವೂ ಆಗಿದ್ದವು.</verse>
				<verse number="28">ಆ ಪೀಠಗಳ ಮೇಲಿರುವ ಕೆಲಸ ಹೇಗೆಂದರೆ, ಅವುಗಳಿಗೆ ಅಂಚುಗಳಿದ್ದವು. ಅವು ಅಂಚುಗಳ ಹಲಗೆಗಳ ನಡುವೆ ಇದ್ದವು.</verse>
				<verse number="29">ಹಲಗೆಗಳ ನಡುವೆ ಇರುವ ಆ ಅಂಚುಗಳಲ್ಲಿ ಸಿಂಹಗಳೂ, ಎತ್ತುಗಳೂ, ಕೆರೂಬಿಗಳೂ ಇದ್ದವು. ಹಲಗೆಗಳ ಮೇಲ್ಭಾಗದಲ್ಲಿ ಒಂದು ಅಂಚು ಇತ್ತು. ಸಿಂಹಗಳಿಗೂ, ಎತ್ತುಗಳಿಗೂ ಕೆಳಭಾಗದಲ್ಲಿ ತೋರಣಗಳು ಅದರ ಸಂಗಡ ಇದ್ದವು.</verse>
				<verse number="30">ಒಂದೊಂದು ಪೀಠಕ್ಕೆ ನಾಲ್ಕು ಕಂಚಿನ ಗಾಲಿಗಳೂ, ಕಂಚಿನ ಅಚ್ಚುಗಳೂ ಇದ್ದವು. ಅದರ ನಾಲ್ಕು ಮೂಲೆಗಳಿಗೂ ಹೂಗಳ ತೋರಣಗಳ ಜೋಡಣೆಗಳಿದ್ದವು.</verse>
				<verse number="31">ಅಂಚಿಗೆ ಒಳಗಾದ ಅದರ ಬಾಯಿ ಮೇಲೆ ಒಂದು ಮೊಳ ಉದ್ದವಾಗಿತ್ತು. ಚಕ್ರಾಕಾರವಾಗಿದ್ದ ಈ ಬಾಯಿ ಒಂದೂವರೆ ಮೊಳ ಅಗಲವಾಗಿತ್ತು. ಅದರ ಬಾಯಿಯ ಮೇಲೆ ಚಿತ್ರಗಳಿದ್ದವು. ಅದರ ಚಿತ್ರಗಳು ದುಂಡಾಗಿರದೆ ಚೌಕವಾಗಿದ್ದವು.</verse>
				<verse number="32">ಅಂಚುಗಳ ಕೆಳಗೆ ನಾಲ್ಕು ಗಾಲಿಗಳಿದ್ದವು. ಗಾಲಿಗಳ ಅಚ್ಚುಗಳು ಪೀಠದಲ್ಲಿದ್ದವು. ಒಂದೊಂದು ಗಾಲಿಯು ಒಂದೂವರೆ ಮೊಳವಾಗಿತ್ತು. ಗಾಲಿಗಳ ಮೇಲೆ ಇದ್ದ ಕೆಲಸವು ರಥದ ಗಾಲಿಯ ಕೆಲಸದ ಹಾಗೆ ಇತ್ತು.</verse>
				<verse number="33">ಅವುಗಳ ಇರುಸುಗಳೂ, ಅಣಸುಗಳೂ, ಚಕ್ರಗಳೂ, ಅವುಗಳ ಕಂಬಿಗಳೂ ಎರಕ ಹೊಯ್ದ ಕಂಚಿನಿಂದ ಮಾಡಲಾಗಿತ್ತು.</verse>
				<verse number="34">ಒಂದೊಂದು ಪೀಠದ ನಾಲ್ಕು ಮೂಲೆಗಳಲ್ಲಿ ಅಂಚುಗಳಿದ್ದವು. ಪೀಠದಲ್ಲಿಂದಲೇ ಅಖಂಡವಾಗಿದ್ದವು.</verse>
				<verse number="35">ಪೀಠದ ತಲೆಯಲ್ಲಿ 23 ಸೆಂಟಿಮೀಟರ್ ದುಂಡಾದ ಬಾಯಿ ಇತ್ತು. ಪೀಠದ ತಲೆಯ ಮೇಲೆ ಅದರ ಕೈಪಿಡಿಗಳೂ, ಅದರ ಅಂಚುಗಳೂ ಅಖಂಡವಾಗಿದ್ದವು.</verse>
				<verse number="36">ಅದರದರ ಪ್ರಮಾಣದ ಪ್ರಕಾರ ಹಲಗೆಗಳ ಕೈಹಿಡಿಗಳ ಮೇಲೆಯೂ ಅಂಚುಗಳ ಮೇಲೆಯೂ ಕೆರೂಬಿ, ಸಿಂಹ ಖರ್ಜೂರ ವೃಕ್ಷಗಳನ್ನು ಚಿತ್ರಿಸಿದನು. ಸುತ್ತಲೂ ಅದರದರ ಪ್ರಮಾಣದ ಪ್ರಕಾರ ಪುಷ್ಪ ತೋರಣಗಳನ್ನು ಚಿತ್ರಿಸಿದನು.</verse>
				<verse number="37">ಈ ಪ್ರಕಾರ ಆ ಹತ್ತು ಪೀಠಗಳನ್ನು ಮಾಡಿದನು. ಅವುಗಳಿಗೆಲ್ಲಾ ಒಂದೇ ಎರಕವೂ, ಒಂದೇ ಅಳತೆಯೂ, ಒಂದೇ ಪ್ರಮಾಣವೂ ಇದ್ದವು.</verse>
				<verse number="38">ಹತ್ತು ಕಂಚಿನ ತೊಟ್ಟಿಗಳನ್ನು ಮಾಡಿದನು. ಒಂದೊಂದು ತೊಟ್ಟಿಯು 800 ಲೀಟರ್ ನೀರು ಹಿಡಿಯುತ್ತಿತ್ತು. ಒಂದೊಂದು ತೊಟ್ಟಿಯು 2 ಮೀಟರ್ ಇದ್ದವು. ಪ್ರತಿಯೊಂದು ಪೀಠಗಳ ಮೇಲೆ ಒಂದೊಂದು ತೊಟ್ಟಿಯನ್ನು ಇಟ್ಟನು.</verse>
				<verse number="39">ಆಲಯದ ದಕ್ಷಿಣ ದಿಕ್ಕಿಗೆ ಐದು ಪೀಠಗಳನ್ನೂ, ಆಲಯದ ಉತ್ತರ ದಿಕ್ಕಿಗೆ ಐದು ಪೀಠಗಳನ್ನೂ ಇಟ್ಟನು. ಆದರೆ ಜಲಾಶಯವನ್ನು ಆಲಯದ ದಕ್ಷಿಣ ದಿಕ್ಕಿಗೆ ಅಂದರೆ ಆಲಯದ ಆಗ್ನೇಯ ಮೂಲೆಯಲ್ಲಿ ಇಟ್ಟನು.</verse>
				<verse number="40">ಇದಲ್ಲದೆ ಹೂರಾಮನು ಪಾತ್ರೆಗಳನ್ನೂ, ಸಲಿಕೆಗಳನ್ನೂ, ಬಟ್ಟಲುಗಳನ್ನೂ ಮಾಡಿದನು. ಯೆಹೋವ ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊಮೋನನು ಒಪ್ಪಿಸಿದ ಎಲ್ಲಾ ಕೆಲಸಗಳನ್ನು ಹೂರಾಮನು ಮಾಡಿ ತೀರಿಸಿದನು:</verse>
				<verse number="41">ಅವು ಯಾವುವೆಂದರೆ, ಎರಡು ಸ್ತಂಭಗಳು, ಆ ಸ್ತಂಭಗಳ ಮೇಲಿನ ಎರಡು ಕುಂಭಗಳು, ಆ ಎರಡು ಕುಂಭಗಳನ್ನು ಮುಚ್ಚುವ ಎರಡು ಜಾಲರಿಗಳು.</verse>
				<verse number="42">ಎರಡು ಜಾಲರಿ ಸಾಮಾನುಗಳಿಗೆ ನಾನೂರು ದಾಳಿಂಬೆ ಹಣ್ಣುಗಳು, ಸ್ತಂಭಗಳ ಮೇಲೆ ಇರುವ ಎರಡು ಕುಂಭಗಳನ್ನು ಮುಚ್ಚುವಂತೆ ಒಂದು ಜಾಲರಿ ಸಲಕರಣೆಗಳಿಗೆ ಎರಡು ಸಾಲಿನ ದಾಳಿಂಬೆ ಹಣ್ಣುಗಳು,</verse>
				<verse number="43">ಹತ್ತು ಪೀಠಗಳು, ಅವುಗಳ ಮೇಲಿರುವ ಹತ್ತು ತೊಟ್ಟಿಗಳು,</verse>
				<verse number="44">ಸಮುದ್ರಪಾತ್ರೆಯು ಅದರ ಕೆಳಗಿರುವ ಹನ್ನೆರಡು ಎತ್ತುಗಳು,</verse>
				<verse number="45">ಪಾತ್ರೆಗಳು, ಸಲಿಕೆಗಳು, ಬೋಗುಣಿಗಳು. ಯೆಹೋವ ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊಮೋನನಿಗೆ ಹೂರಾಮನು ಮಾಡಿದ ಈ ಸಲಕರಣೆಗಳೆಲ್ಲಾ ಹೊಳೆಯುವ ಕಂಚಿನವುಗಳಾಗಿದ್ದವು.</verse>
				<verse number="46">ಯೊರ್ದನಿಗೆ ಸೇರಿದ ಬಯಲಾದ ಸುಕ್ಕೋತಿಗೂ, ಚಾರೆತಾನಿಗೂ ನಡುವೆ ಇರುವ ಜೇಡಿಮಣ್ಣಿನ ಅಚ್ಚುಗಳಲ್ಲಿ ಅರಸನು ಅವುಗಳನ್ನು ಎರಕ ಹೊಯ್ಯಿಸಿದನು.</verse>
				<verse number="47">ಸೊಲೊಮೋನನು ಮಾಡಿಸಿದ ಈ ಸಲಕರಣೆಗಳೆಲ್ಲಾ ಬಹು ಹೆಚ್ಚಾಗಿದ್ದರಿಂದ ಅವುಗಳನ್ನು ಎಣಿಸದೆ ಬಿಟ್ಟನು, ಹೀಗಾಗಿ ಕಂಚಿನ ತೂಕವು ಎಷ್ಟೆಂದು ನಿರ್ಧರಿಸಲಾಗಲಿಲ್ಲ.</verse>
				<verse number="48">ಸೊಲೊಮೋನನು ಯೆಹೋವ ದೇವರ ಆಲಯದ ಎಲ್ಲಾ ಸಲಕರಣೆಗಳನ್ನು ಮಾಡಿಸಿದನು. ಅವು ಯಾವುವೆಂದರೆ: ಬಂಗಾರದ ಧೂಪವೇದಿಯನ್ನು ಸಮ್ಮುಖದ ರೊಟ್ಟಿಗಳನ್ನು ಇಡುವುದಕ್ಕೆ ಚಿನ್ನದ ಮೇಜೂ,</verse>
				<verse number="49">ಮಹಾಪರಿಶುದ್ಧ ಸ್ಥಳದ ಮುಂಭಾಗದ ಬಲಗಡೆಯಲ್ಲಿ ಐದು, ಎಡಗಡೆಯಲ್ಲಿ ಐದು ಶುದ್ಧ ಬಂಗಾರದ ದೀಪಸ್ತಂಭಗಳೂ, ಅದರ ಬಂಗಾರದ ಹೂವುಗಳೂ, ದೀಪಗಳೂ, ಚಿಮಟಗಳೂ,</verse>
				<verse number="50">ಶುದ್ಧ ಬಂಗಾರದಿಂದ ಕತ್ತರಿಗಳು, ಬೋಗುಣಿಗಳು, ಅಗ್ನಿಪಾತ್ರೆಗಳು, ಅಗ್ಗಿಷ್ಟಿಗೆ ಇವುಗಳನ್ನು ಮಾಡಿಸಿದನು. ಇದಲ್ಲದೆ ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯ ಬಾಗಿಲುಗಳಿಗೂ, ಮಂದಿರದ ಮನೆಯ ಬಾಗಿಲುಗಳಿಗೂ ಬಂಗಾರದ ಕೀಲುಗಳನ್ನು ಮಾಡಿಸಿದನು.</verse>
				<verse number="51">ಹೀಗೆಯೇ ಅರಸನಾದ ಸೊಲೊಮೋನನು ಯೆಹೋವ ದೇವರ ಆಲಯಕ್ಕೋಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಯಿತು. ಆಗ ಸೊಲೊಮೋನನು ತನ್ನ ತಂದೆ ದಾವೀದನು ಪ್ರತಿಷ್ಠೆ ಮಾಡಿದ ಬೆಳ್ಳಿಯನ್ನೂ, ಬಂಗಾರವನ್ನೂ, ಎಲ್ಲಾ ಸಲಕರಣೆಗಳನ್ನೂ ಯೆಹೋವ ದೇವರ ಆಲಯದ ಬೊಕ್ಕಸಗಳಲ್ಲಿ ಇಟ್ಟನು.</verse>
			</chapter>
			<chapter number="8">
				<verse number="1">ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ, ಅರಸನಾದ ಸೊಲೊಮೋನನು ಇಸ್ರಾಯೇಲರಲ್ಲಿ ಶ್ರೇಷ್ಠರಾಗಿರುವ ಪಿತೃಗಳಾದ ಇಸ್ರಾಯೇಲಿನ ಹಿರಿಯರನ್ನೂ, ಗೋತ್ರಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.</verse>
				<verse number="2">ಯಥನಿಮ ತಿಂಗಳಲ್ಲಿ ಹಬ್ಬವಿದ್ದಾಗ, ಇಸ್ರಾಯೇಲಿನ ಸಮಸ್ತ ಜನರು ಅರಸನಾದ ಸೊಲೊಮೋನನ ಬಳಿಗೆ ಕೂಡಿಬಂದರು.</verse>
				<verse number="3">ಇಸ್ರಾಯೇಲಿನ ಹಿರಿಯರೆಲ್ಲರೂ ಬಂದ ತರುವಾಯ ಯಾಜಕರು ಯೆಹೋವ ದೇವರ ಮಂಜೂಷವನ್ನು ಎತ್ತಿಕೊಂಡು,</verse>
				<verse number="4">ದೇವದರ್ಶನದ ಗುಡಾರವನ್ನೂ, ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಸಲಕರಣೆಗಳನ್ನೂ ತಂದರು. ಇವುಗಳನ್ನು ಯಾಜಕರೂ, ಲೇವಿಯರೂ ಹೊತ್ತುಕೊಂಡು ಬಂದರು.</verse>
				<verse number="5">ಆಗ ಅರಸನಾದ ಸೊಲೊಮೋನನೂ, ಅವನ ಬಳಿಯಲ್ಲಿ ಕೂಡಿದ ಇಸ್ರಾಯೇಲ್ ಜನರೆಲ್ಲರೂ ಮಂಜೂಷದ ಮುಂದೆ ನಿಂತು ಎಣಿಸಲಾಗದಷ್ಟು ಕುರಿಗಳನ್ನೂ ಪಶುಗಳನ್ನೂ ಬಲಿಯಾಗಿ ಅರ್ಪಿಸಿದರು.</verse>
				<verse number="6">ಯಾಜಕರು ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳದಲ್ಲಿ ಇಟ್ಟರು.</verse>
				<verse number="7">ಕೆರೂಬಿಗಳು ಮಂಜೂಷವಿದ್ದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ, ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿದ್ದವು.</verse>
				<verse number="8">ಆ ಕೋಲುಗಳು ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗುಡಿಯ ಮುಂಭಾಗದಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು, ಆದರೆ ಅವು ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲಿಯೇ ಇವೆ.</verse>
				<verse number="9">ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಬಂದ ನಂತರ ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿದಾಗ, ಮೋಶೆಯು ಹೋರೇಬ್ ಬೆಟ್ಟದ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.</verse>
				<verse number="10">ಯಾಜಕರು ಪರಿಶುದ್ಧ ಸ್ಥಳದಿಂದ ಬಂದಾಗ, ಮೇಘವು ಯೆಹೋವ ದೇವರ ಮಂದಿರವನ್ನು ತುಂಬಿತ್ತು.</verse>
				<verse number="11">ಯೆಹೋವ ದೇವರ ತೇಜಸ್ಸಿನಿಂದ ವ್ಯಾಪಿಸಿದ್ದ ಆ ಮೋಡವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.</verse>
				<verse number="12">ಆಗ ಸೊಲೊಮೋನನು, “ಯೆಹೋವ ದೇವರೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀರಿ.</verse>
				<verse number="13">ಆದರೆ ನಾನು ನಿಮಗೋಸ್ಕರ ಭವ್ಯವಾದ ಮಂದಿರವನ್ನು ಕಟ್ಟಿಸಿದ್ದೇನೆ, ಅದು ನಿಮಗೆ ಶಾಶ್ವತವಾದ ವಾಸಸ್ಥಳವಾಗಿರಲಿ,” ಎಂದು ಹೇಳಿದನು.</verse>
				<verse number="14">ಅರಸನು ಜನರ ಕಡೆ ತಿರುಗಿಕೊಂಡು, ಎದ್ದುನಿಂತಿದ್ದ ಇಸ್ರಾಯೇಲ್ ಜನರನ್ನೆಲ್ಲಾ ಆಶೀರ್ವದಿಸಿದನು.</verse>
				<verse number="15">ನಂತರ ರಾಜನು ಹೀಗೆ ಹೇಳಿದನು: “ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ, ಅವರು ನನ್ನ ತಂದೆಯಾದ ದಾವೀದನಿಗೆ ತಮ್ಮ ಬಾಯಿಂದ ವಾಗ್ದಾನ ಮಾಡಿದ್ದನ್ನು, ತಮ್ಮ ಕೈಗಳಿಂದಲೇ ನೆರವೇರಿಸಿದರು. ಅವರು ಹೇಳಿದ್ದೇನೆಂದರೆ,</verse>
				<verse number="16">‘ನನ್ನ ಜನರಾದ ಇಸ್ರಾಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು, ನನ್ನ ನಾಮವು ಅದರಲ್ಲಿರುವ ಹಾಗೆ, ಆಲಯವನ್ನು ಕಟ್ಟುವುದಕ್ಕೆ ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ನಾನು ಆಯ್ದುಕೊಳ್ಳದೆ, ನನ್ನ ಜನರಾದ ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನು ಆಯ್ದುಕೊಂಡೆನು,’ ಎಂಬುದು.</verse>
				<verse number="17">“ನನ್ನ ತಂದೆ ದಾವೀದನು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದಾಗ,</verse>
				<verse number="18">ಯೆಹೋವ ದೇವರು ಆತನಿಗೆ, ‘ನೀನು ನನ್ನ ಹೆಸರಿಗೋಸ್ಕರ ಒಂದು ಆಲಯವನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೇದೇ ಸರಿ.</verse>
				<verse number="19">ಆದರೆ ನೀನು ಆಲಯವನ್ನು ಕಟ್ಟಬಾರದು. ನಿನ್ನಿಂದ ಹುಟ್ಟುವ ಮಗನೇ, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕು,’ ಎಂದು ಹೇಳಿದರು.</verse>
				<verse number="20">“ಈಗ ಯೆಹೋವ ದೇವರು ತಾವು ಹೇಳಿದ ವಾಗ್ದಾನವನ್ನು ನೆರವೇರಿಸಿದ್ದಾರೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಯೆಹೋವ ದೇವರು ಮಾತುಕೊಟ್ಟ ಪ್ರಕಾರ, ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿಸಿದ್ದೇನೆ.</verse>
				<verse number="21">ಇದಲ್ಲದೆ ಯೆಹೋವ ದೇವರು ನಮ್ಮ ಪಿತೃಗಳನ್ನು ಈಜಿಪ್ಟ್ ದೇಶದಿಂದ ಬರಮಾಡಿದಾಗ, ಅವರ ಸಂಗಡ ಮಾಡಿದ ಒಡಂಬಡಿಕೆಯು ಇರುವ ಮಂಜೂಷಕ್ಕೋಸ್ಕರ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇಟ್ಟೆನು,” ಎಂದನು.</verse>
				<verse number="22">ಆಗ ಸೊಲೊಮೋನನು ಇಸ್ರಾಯೇಲಿನ ಸಮಸ್ತ ಸಮೂಹದವರ ಸಮ್ಮುಖದಲ್ಲಿ ಯೆಹೋವ ದೇವರ ಬಲಿಪೀಠದ ಮುಂದೆ ನಿಂತು, ಆಕಾಶದೆಡೆಗೆ ತನ್ನ ಕೈಗಳನ್ನು ಚಾಚಿ,</verse>
				<verse number="23">ಹೀಗೆ ಪ್ರಾರ್ಥಿಸಿದನು: “ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ಮೇಲಿರುವ ಆಕಾಶದಲ್ಲಾದರೂ, ಕೆಳಗಿರುವ ಭೂಮಿಯಲ್ಲಾದರೂ ನಿಮ್ಮ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣ ಹೃದಯದಿಂದ ನಿಮಗೆ ನಡೆದುಕೊಳ್ಳುವಂಥ ಸೇವಕರ ಬಗ್ಗೆ ನೀವು ನಿಮ್ಮ ಒಡಂಬಡಿಕೆಯನ್ನು ನೆರವೇರಿಸಿ ಕೃಪೆಯನ್ನು ತೋರಿಸುವವರೇ,</verse>
				<verse number="24">ನಿಮ್ಮ ಸೇವಕನಾದಂಥ ನನ್ನ ತಂದೆಯಾದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿ, ನೀವು ನಿಮ್ಮ ಬಾಯಿಂದ ಹೇಳಿದ್ದನ್ನು ಇಂದು ಈಡೇರಿಸಿದ್ದೀರಿ.</verse>
				<verse number="25">“ಆದಕಾರಣ, ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ‘ನಿನ್ನ ಸಂತಾನದವರು ನಿನ್ನಂತೆ ಜಾಗ್ರತೆಯಾಗಿದ್ದು, ನನ್ನ ಮಾರ್ಗದಲ್ಲೇ ನಡೆದುಕೊಳ್ಳುವದಾದರೆ, ಅವರು ತಪ್ಪದೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊಳ್ಳುವರು,’ ಎಂದು ನೀವು ನನ್ನ ತಂದೆಯಾದ ನಿಮ್ಮ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದನ್ನು ನೆರವೇರಿಸಿರಿ.</verse>
				<verse number="26">ಈಗ ಇಸ್ರಾಯೇಲಿನ ದೇವರೇ, ನೀವು ನನ್ನ ತಂದೆಯೂ ನಿಮ್ಮ ಸೇವಕನೂ ಆದ ದಾವೀದನಿಗೆ ಹೇಳಿದ ವಾಕ್ಯವು ನೆರವೇರಲಿ.</verse>
				<verse number="27">“ಆದರೆ ದೇವರು ನಿಜವಾಗಿ ಭೂಮಿಯ ಮೇಲೆ ವಾಸವಾಗಿರುವರೋ? ಇಗೋ, ಆಕಾಶವೂ ಉನ್ನತೋನ್ನತ ಆಕಾಶವೂ ನಿಮಗೆ ಸಾಲದು. ಹಾಗಾದರೆ, ನಾನು ಕಟ್ಟಿಸಿದ ಈ ಆಲಯವು ನಿಮಗೆ ಸಾಲುವುದು ಹೇಗೆ?</verse>
				<verse number="28">ಆದರೂ ನನ್ನ ದೇವರಾದ ಯೆಹೋವ ದೇವರೇ, ನಿಮ್ಮ ಸೇವಕನ ಪ್ರಾರ್ಥನೆಗೂ, ಅವನ ವಿಜ್ಞಾಪನೆಗೂ ತಿರುಗಿಕೊಂಡು, ಇಂದು ನಿಮ್ಮ ಸೇವಕನು ನಿಮ್ಮ ಮುಂದೆ ಪ್ರಾರ್ಥಿಸುವ ಪ್ರಾರ್ಥನೆಯ ಕೂಗನ್ನು ಕೇಳಿರಿ.</verse>
				<verse number="29">ನಿಮ್ಮ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀವು ಕೇಳುವ ಹಾಗೆ, ‘ಇಲ್ಲಿ ನನ್ನ ನಾಮಪ್ರಭಾವ ಇರುವುದು,’ ಎಂದು ನೀವು ಹೇಳಿದ ಈ ಆಲಯದ ಮೇಲೆ ರಾತ್ರಿ ಹಗಲೂ ನಿಮ್ಮ ಕಟಾಕ್ಷವಿರಲಿ.</verse>
				<verse number="30">ನಿಮ್ಮ ಜನರಾದ ಇಸ್ರಾಯೇಲರ ಮತ್ತು ನಿಮ್ಮ ಸೇವಕನ ವಿಜ್ಞಾಪನೆಯನ್ನೂ ಕೇಳಿರಿ. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ, ನೀವು ವಾಸಮಾಡುವ ಸ್ಥಳವಾದ ಪರಲೋಕದಿಂದ ಕೇಳಿ, ಕ್ಷಮೆಯನ್ನು ದಯಪಾಲಿಸಿರಿ.</verse>
				<verse number="31">“ತನ್ನ ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಒಬ್ಬ ವ್ಯಕ್ತಿ, ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ, ಅಂಥವನು ಈ ಆಲಯಕ್ಕೆ ಬಂದು, ನಿಮ್ಮ ಪೀಠದ ಮುಂದೆ ನಿಂತು ಪ್ರಮಾಣಮಾಡಿದರೆ,</verse>
				<verse number="32">ನೀವೇ ಆ ಅಪರಾಧಿಯನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿ, ಅವನು ಅಪರಾಧಿಯೆಂದು ತೋರಿಸಿಕೊಡಿರಿ. ನಿರ್ದೋಷಿಯಾಗಿದ್ದರೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡುವ ಹಾಗೆ ಪರಲೋಕದಲ್ಲಿರುವ ನೀವು ಅದನ್ನು ಕೇಳಿ, ನಿಮ್ಮ ಸೇವಕರ ನ್ಯಾಯವನ್ನು ತೀರಿಸಿರಿ.</verse>
				<verse number="33">“ನಿಮ್ಮ ಜನರಾದ ಇಸ್ರಾಯೇಲರು ನಿಮಗೆ ವಿರೋಧವಾಗಿ ಪಾಪಮಾಡಿದ್ದರಿಂದ, ತಮ್ಮ ಶತ್ರುವಿನ ಮುಂದೆ ಪರಾಭವಗೊಂಡು, ನಿಮ್ಮ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ, ಈ ಆಲಯದಲ್ಲಿ ನಿಮಗೆ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡಿದರೆ,</verse>
				<verse number="34">ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಜನರಾದ ಇಸ್ರಾಯೇಲರ ಪಾಪವನ್ನು ಮನ್ನಿಸಿ, ನೀವು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡಿರಿ.</verse>
				<verse number="35">“ಅವರು ನಿಮಗೆ ವಿರೋಧವಾಗಿ ಪಾಪವನ್ನು ಮಾಡಿದ್ದರಿಂದ, ನೀವು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ಕುಂದಿಸಿದಾಗ ಅವರು ತಮ್ಮ ಪಾಪವನ್ನು ಬಿಟ್ಟು ಈ ಸ್ಥಳದ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ ಪ್ರಾರ್ಥಿಸಿದರೆ,</verse>
				<verse number="36">ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ, ಅವರು ನಡೆಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸಿ, ನಿಮ್ಮ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡಿರಿ.</verse>
				<verse number="37">“ದೇಶದಲ್ಲಿ ಬರಗಾಲ, ಘೋರವ್ಯಾಧಿ, ಉರಿಗಾಳಿ, ಬೆಳೆಗಳ ಮೇಲೆ ಮಿಡತೆ, ಕಂಬಳಿಹುಳು ಇವುಗಳು ಇದ್ದರೆ, ಅಥವಾ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ, ಯಾವ ಬಾಧೆ ಯಾವ ಬೇನೆ ಇದ್ದರೂ,</verse>
				<verse number="38">ನಿಮ್ಮ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಒಬ್ಬ ಮನುಷ್ಯನಾದರೂ ತನ್ನ ಹೃದಯದ ವೇದನೆಯಿಂದ, ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿ, ಯಾವ ಪ್ರಾರ್ಥನೆಯನ್ನಾದರೂ, ವಿಜ್ಞಾಪನೆಯನ್ನಾದರೂ ಮಾಡಿದರೆ,</verse>
				<verse number="39">ನೀವು ವಾಸಮಾಡುವ ಪರಲೋಕದಿಂದ ಕೇಳಿ, ಮನ್ನಿಸಿ, ನಡೆಸಿರಿ. ಮನುಷ್ಯನ ಹೃದಯವನ್ನು ತಿಳಿದಿರುವ ನೀವು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರ ಪ್ರತಿಫಲಕೊಡಿರಿ. ಏಕೆಂದರೆ ನೀವೊಬ್ಬರೇ ಸಮಸ್ತ ಜನರ ಹೃದಯಗಳನ್ನು ತಿಳಿದವರಾಗಿದ್ದೀರಿ.</verse>
				<verse number="40">ಆಗ ನೀವು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿರುವರು.</verse>
				<verse number="41">“ನಿಮ್ಮ ಜನರಾದ ಇಸ್ರಾಯೇಲಿನವನಲ್ಲದೆ ನಿಮ್ಮ ನಾಮದ ನಿಮಿತ್ತ ದೂರದೇಶದಿಂದ ಬಂದ ಪರದೇಶಿಯ ವಿಷಯದಲ್ಲಿ ಬೇಡಿಕೊಳ್ಳುತ್ತೇನೆ.</verse>
				<verse number="42">ಜನರು ನಿಮ್ಮ ಮಹಾನಾಮವನ್ನೂ, ನಿಮ್ಮ ಬಲವಾದ ಕೈ, ನಿಮ್ಮ ಚಾಚಿದ ತೋಳು ಇವುಗಳ ಕುರಿತು ಕೇಳಿ, ಅವರು ಈ ಆಲಯದ ಕಡೆಗೆ ಬಂದು ಪ್ರಾರ್ಥನೆಮಾಡಿದರೆ,</verse>
				<verse number="43">ನೀವು ವಾಸಮಾಡುವ ಪರಲೋಕದಿಂದ ಕೇಳಿ, ಪರದೇಶಿಯು ಕೇಳಿದ್ದೆಲ್ಲವನ್ನು ನೆರವೇರಿಸಿರಿ. ಆಗ ಭೂಲೋಕದ ಎಲ್ಲಾ ಜನರೂ ನಿಮ್ಮ ನಾಮವನ್ನು ತಿಳಿದು, ನಿಮ್ಮ ಜನರಾದ ಇಸ್ರಾಯೇಲರಂತೆ ನಿಮಗೆ ಭಯಭಕ್ತಿಯುಳ್ಳವರಾಗಿ, ನಾನು ಕಟ್ಟಿಸಿದ ಈ ಆಲಯವು ನಿಮ್ಮ ಹೆಸರಿನಿಂದ ಕರೆಯಲಾಗಿದೆ ಎಂದು ತಿಳಿದುಕೊಳ್ಳುವರು.</verse>
				<verse number="44">“ನೀವು ನಿಮ್ಮ ಜನರನ್ನು ತಮ್ಮ ಶತ್ರುಗಳ ಸಂಗಡ ಯುದ್ಧಮಾಡುವದಕ್ಕೆ ಎಲ್ಲಿಗಾದರೂ ಕಳುಹಿಸಿದಾಗ, ಅವರು ಅಲ್ಲಿಂದ ನೀವು ಆಯ್ದುಕೊಂಡ ಪಟ್ಟಣದ ಕಡೆಗೂ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ಅವರು ಯೆಹೋವ ದೇವರಾದ ನಿಮಗೆ ಪ್ರಾರ್ಥನೆ ಮಾಡಿದಾಗ,</verse>
				<verse number="45">ನೀವು ಪರಲೋಕದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ, ಅವರಿಗೆ ನ್ಯಾಯವನ್ನು ತೀರಿಸಿರಿ.</verse>
				<verse number="46">“ಪಾಪ ಮಾಡದವನು ಯಾವನೂ ಇಲ್ಲವಲ್ಲಾ. ಆದ್ದರಿಂದ ಅವರು ನಿಮಗೆ ವಿರೋಧವಾಗಿ ಪಾಪಮಾಡಲು, ನೀವು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ, ಸಮೀಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಹೋಗುವಂತೆ ನೀವು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ,</verse>
				<verse number="47">ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಮಾನಸಾಂತರಪಟ್ಟು, ‘ನಾವು ಪಾಪಮಾಡಿದ್ದೇವೆ, ತಪ್ಪುಮಾಡಿ ದುಷ್ಟರಾಗಿ ನಡೆದಿದ್ದೇವೆ,’ ಎಂದು ಅವರನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿಮಗೆ ಪ್ರಾರ್ಥನೆಮಾಡಿದರೆ,</verse>
				<verse number="48">ಅವರನ್ನು ಸೆರೆಹಿಡಿದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ಕಡೆಗೆ ತಿರುಗಿಕೊಂಡು, ನೀವು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಕಡೆಗೂ, ನೀವು ಆಯ್ದುಕೊಂಡ ಪಟ್ಟಣದ ಕಡೆಗೂ ನಿಮ್ಮ ನಾಮಕ್ಕೋಸ್ಕರ ನಾನು ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ಅವರು ನಿಮಗೆ ಪ್ರಾರ್ಥನೆಮಾಡಿದರೆ,</verse>
				<verse number="49">ಆಗ ನೀವು ವಾಸಮಾಡುವ ಪರಲೋಕದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸಿರಿ.</verse>
				<verse number="50">ನಿಮ್ಮ ಜನರು ನಿಮಗೆ ವಿರೋಧವಾಗಿ ಮಾಡಿದ ಪಾಪಗಳನ್ನೂ, ಅವರ ಸಮಸ್ತ ದ್ರೋಹಗಳನ್ನೂ ಕ್ಷಮಿಸಿರಿ; ಅವರನ್ನು ಸೆರೆಯಾಗಿ ಒಯ್ಯುವವರು ಅವರನ್ನು ಕರುಣಿಸುವಂತೆ ನೀವು ಸಹ ಅವರನ್ನು ಕರುಣಿಸಿರಿ.</verse>
				<verse number="51">ಏಕೆಂದರೆ ಅವರು ಈಜಿಪ್ಟಿನಿಂದಲೂ, ಕಬ್ಬಿಣದ ಒಲೆಯ ಮಧ್ಯದಿಂದಲೂ, ನೀವು ಬರಮಾಡಿದ ನಿಮ್ಮ ಜನರಾಗಿಯೂ, ನಿಮ್ಮ ಬಾಧ್ಯತೆಯೂ ಆಗಿದ್ದಾರೆ. ಹೀಗೆ ಅವರು ನಿಮಗೆ ಮೊರೆಯಿಡುವ ಎಲ್ಲಾದರಲ್ಲಿ ನೀವು ಅವರ ವ್ಯಾಜ್ಯವನ್ನು ಆಲಿಸಿರಿ.</verse>
				<verse number="52">“ನಿಮ್ಮ ಸೇವಕನ ವಿಜ್ಞಾಪನೆಗೂ, ನಿಮ್ಮ ಜನರಾದ ಇಸ್ರಾಯೇಲರ ವಿಜ್ಞಾಪನೆಗೂ ನಿಮ್ಮ ಕಣ್ಣುಗಳು ತೆರೆದಿರಲಿ. ಅವರು ನಿಮ್ಮನ್ನು ಬೇಡಿಕೊಳ್ಳುವಾಗಲೆಲ್ಲಾ ಅವರ ವಿಜ್ಞಾಪನೆಗಳಿಗೆ ಕಿವಿಗೊಡಿರಿ.</verse>
				<verse number="53">ನೀವು ಈಜಿಪ್ಟಿನಿಂದ ನಮ್ಮ ಪಿತೃಗಳನ್ನು ಹೊರಗೆ ತಂದಾಗ ನಿಮ್ಮ ಸೇವಕನಾದ ಮೋಶೆಯ ಮುಖಾಂತರವಾಗಿ ಹೇಳಿದ ಹಾಗೆಯೇ ಸಾರ್ವಭೌಮ ಯೆಹೋವ ದೇವರೇ, ಅವರನ್ನು ನಿಮ್ಮ ಬಾಧ್ಯತೆಯಾಗಿ ಭೂಮಿಯ ಸಮಸ್ತ ಜನರೊಳಗಿಂದ ಪ್ರತ್ಯೇಕಿಸಿರಿ,” ಎಂದನು.</verse>
				<verse number="54">ಸೊಲೊಮೋನನು ಈ ಸಮಸ್ತ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಯೆಹೋವ ದೇವರಿಗೆ ಮಾಡಿ ತೀರಿಸಿದ ತರುವಾಯ, ಅವನು ಯೆಹೋವ ದೇವರ ಬಲಿಪೀಠದ ಮುಂದೆ ಮೊಣಕಾಲೂರಿ, ತನ್ನ ಕೈಗಳನ್ನು ಆಕಾಶಕ್ಕೆ ಚಾಚಿದವನಾಗಿ ಎದ್ದು ನಿಂತನು.</verse>
				<verse number="55">ಅವನು ನಿಂತುಕೊಂಡು ಮಹಾಶಬ್ದದಿಂದ ಇಸ್ರಾಯೇಲಿನ ಸಮಸ್ತ ಸಮೂಹವನ್ನು ಆಶೀರ್ವದಿಸಿದನು.</verse>
				<verse number="56">“ತಮ್ಮ ಜನರಾದ ಇಸ್ರಾಯೇಲರಿಗೆ ತಾವು ಮಾತುಕೊಟ್ಟ ಪ್ರಕಾರ ವಿಶ್ರಾಂತಿಯನ್ನು ಕೊಟ್ಟ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ಸೇವಕನಾದ ಮೋಶೆಯ ಮುಖಾಂತರ ಹೇಳಿದ ಎಲ್ಲಾ ಉತ್ತಮವಾದ ವಾಗ್ದಾನಗಳಲ್ಲಿ ಒಂದು ವಾಗ್ದಾನವಾದರೂ ಬಿದ್ದು ಹೋಗಲಿಲ್ಲ.</verse>
				<verse number="57">ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ಕೈಬಿಡದೆ, ನಮ್ಮನ್ನು ತ್ಯಜಿಸದೆ, ನಮ್ಮ ಪಿತೃಗಳ ಸಂಗಡ ಹೇಗೆ ಇದ್ದರೋ ಹಾಗೆಯೇ ನಮ್ಮ ಸಂಗಡ ಇರಲಿ.</verse>
				<verse number="58">ನಮ್ಮ ಪಿತೃಗಳಿಗೆ ಕೊಟ್ಟ ಆಜ್ಞೆಗಳನ್ನು, ಅಪ್ಪಣೆಗಳನ್ನು, ನಿಯಮಗಳನ್ನು ಕೈಗೊಂಡು ಅವರ ಎಲ್ಲಾ ಮಾರ್ಗಗಳಲ್ಲಿ ನಡೆಯಲು ಅವರು ನಮ್ಮ ಹೃದಯಗಳನ್ನು ಅವರ ಕಡೆಗೆ ತಿರುಗಿಸಲಿ.</verse>
				<verse number="59">ಇದಲ್ಲದೆ ಯೆಹೋವ ದೇವರು ತಾವೇ ದೇವರಾಗಿದ್ದಾರೆ. ಅವರ ಹೊರತು ಬೇರೊಬ್ಬರಿಲ್ಲವೆಂದು ಭೂಲೋಕದ ಜನರೆಲ್ಲರೂ ತಿಳಿಯುವ ಹಾಗೆ, ಕಾರ್ಯಕ್ಕೆ ತಕ್ಕದ್ದಾಗಿ ಸಕಲ ಕಾಲಗಳಲ್ಲಿ ತಮ್ಮ ಸೇವಕನ ನ್ಯಾಯವನ್ನೂ, ತಮ್ಮ ಜನರಾದ ಇಸ್ರಾಯೇಲಿನ ನ್ಯಾಯವನ್ನೂ ತೀರಿಸುವ ಹಾಗೆ, ನಾನು ಯೆಹೋವ ದೇವರ ಮುಂದೆ ವಿಜ್ಞಾಪನೆ ಮಾಡಿದ ಈ ನನ್ನ ಮಾತುಗಳು, ರಾತ್ರಿ ಹಗಲು ನಮ್ಮ ದೇವರಾದ ಯೆಹೋವ ದೇವರ ಬಳಿಯಲ್ಲಿ ಇರಲಿ.</verse>
				<verse number="60">ಇಂದಿನ ಹಾಗೆಯೇ ಅವರ ಕಟ್ಟಳೆಗಳಲ್ಲಿ ನಡೆಯಲೂ, ಅವರ ಆಜ್ಞೆಗಳನ್ನು ಕೈಗೊಳ್ಳಲೂ, ನಮ್ಮ ದೇವರಾದ ಯೆಹೋವ ದೇವರಿಗೆ ನಿಮ್ಮ ಹೃದಯಗಳು ಪೂರ್ಣವಾಗಿ ಒಪ್ಪಿಸಿಕೊಟ್ಟದ್ದಾಗಿರಲಿ,” ಎಂದನು.</verse>
				<verse number="61">ಆಗ ಅರಸನೂ, ಅವನ ಸಂಗಡ ಇಸ್ರಾಯೇಲರೆಲ್ಲರೂ ಯೆಹೋವ ದೇವರ ಮುಂದೆ ಬಲಿಗಳನ್ನು ಅರ್ಪಿಸಿದರು.</verse>
				<verse number="62">ಸೊಲೊಮೋನನು ಯೆಹೋವ ದೇವರಿಗೆ ಸಮಾಧಾನದ ಬಲಿಗಳಾಗಿ 22,000 ಹೋರಿಗಳನ್ನೂ, 1,20,000 ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ, ಇಸ್ರಾಯೇಲಿನ ಸಮಸ್ತ ಜನರೂ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆ ಮಾಡಿದರು.</verse>
				<verse number="63">ಆ ದಿನ ಅರಸನು ಯೆಹೋವ ದೇವರ ಆಲಯದ ಮುಂದಿರುವ ಮಧ್ಯದ ಅಂಗಳವನ್ನು ಪ್ರತಿಷ್ಠೆ ಮಾಡಿದನು. ಯೆಹೋವ ದೇವರ ಮುಂದಿರುವ ಕಂಚಿನ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಅಲ್ಲಿ ಅವನು ದಹನಬಲಿಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.</verse>
				<verse number="64">ಅದೇ ಕಾಲದಲ್ಲಿ ಸೊಲೊಮೋನನೂ, ಅವನ ಸಂಗಡ ಲೆಬೊ ಹಮಾತಿನ ಪ್ರದೇಶ ಮೊದಲುಗೊಂಡು ಈಜಿಪ್ಟಿನ ನದಿಯವರೆಗೆ ಇರುವ ಮಹಾ ಜನಾಂಗವಾಗಿ ಕೂಡಿಬಂದಿದ್ದ ಸಮಸ್ತ ಇಸ್ರಾಯೇಲರೂ ತಮ್ಮ ದೇವರಾದ ಯೆಹೋವ ದೇವರ ಮುಂದೆ ಏಳೇಳು ದಿನಗಳು ಅಂದರೆ ಹದಿನಾಲ್ಕು ದಿವಸ ಹಬ್ಬವನ್ನು ಆಚರಿಸಿದರು.</verse>
				<verse number="65">ಎಂಟನೆಯ ದಿನದಲ್ಲಿ ಅವನು ಜನರಿಗೆ ಹೋಗುವುದಕ್ಕೆ ಅಪ್ಪಣೆಕೊಡಲು, ಆಗ ಅವರು ಅರಸನನ್ನು ಆಶೀರ್ವದಿಸಿ ಯೆಹೋವ ದೇವರು ತಮ್ಮ ಸೇವಕನಾದ ದಾವೀದನಿಗೂ, ತನ್ನ ಜನರಾದ ಇಸ್ರಾಯೇಲರಿಗೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಅವರು ಹೃದಯದಲ್ಲಿ ಆನಂದಭರಿತರಾಗಿ ಸಂತೋಷಪಡುತ್ತಾ ಅವರವರ ಡೇರೆಗಳಿಗೆ ಹೋದರು.</verse>
			</chapter>
			<chapter number="9">
				<verse number="1">ಸೊಲೊಮೋನನು ಯೆಹೋವ ದೇವರ ಆಲಯವನ್ನೂ, ತನ್ನ ಅರಮನೆಯನ್ನೂ ತಾನು ಬಯಸಿದ್ದೆಲ್ಲವನ್ನೂ ಸಾಧಿಸಿದನು.</verse>
				<verse number="2">ಅನಂತರ ಯೆಹೋವ ದೇವರು ಸೊಲೊಮೋನನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷರಾದಂತೆ, ಅವನಿಗೆ ಎರಡನೆಯ ಸಾರಿ ಪ್ರತ್ಯಕ್ಷರಾದರು.</verse>
				<verse number="3">ಯೆಹೋವ ದೇವರು ಅವನಿಗೆ, “ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆಯನ್ನೂ ನಿನ್ನ ವಿಜ್ಞಾಪನೆಯನ್ನೂ ಕೇಳಿ ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಆಲಯವನ್ನು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.</verse>
				<verse number="4">“ನೀನು ನಿನ್ನ ತಂದೆಯಾದ ದಾವೀದನಂತೆ ಸಂಪೂರ್ಣ ಹೃದಯದಿಂದಲೂ, ಯಥಾರ್ಥತೆಯಿಂದಲೂ ನಾನು ನಿನಗೆ ಆಜ್ಞಾಪಿಸಿದ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಿಷ್ಠೆಯಿಂದ ಕೈಗೊಂಡು ನಡೆದರೆ,</verse>
				<verse number="5">ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ನಿನಗೆ ಉತ್ತರಾಧಿಕಾರಿಯ ಕೊರತೆಯಾಗುವುದಿಲ್ಲವೆಂದು ನಾನು ನಿನ್ನ ತಂದೆ ದಾವೀದನಿಗೆ ಮಾತುಕೊಟ್ಟ ಪ್ರಕಾರ, ‘ಇಸ್ರಾಯೇಲಿನಲ್ಲಿ ನಿನ್ನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.’</verse>
				<verse number="6">“ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ ನಾನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನೂ, ಕಟ್ಟಳೆಗಳನ್ನೂ ಕೈಗೊಂಡು ನಡೆಯದೆ ನನ್ನಿಂದ ದೂರಹೋಗಿ, ಅನ್ಯದೇವರುಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದರೆ,</verse>
				<verse number="7">ಆಗ ನಾನು ಇಸ್ರಾಯೇಲಿಗೆ ಕೊಟ್ಟ ದೇಶದೊಳಗಿಂದ ಅವರನ್ನು ತೆಗೆದುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಇಸ್ರಾಯೇಲರು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಗುರಿಯಾಗುವರು.</verse>
				<verse number="8">ಇದಲ್ಲದೆ ಉನ್ನತವಾಗಿರುವ ಈ ಆಲಯದ ಮಾರ್ಗವಾಗಿ ಹೋಗುವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು, ‘ಯೆಹೋವ ದೇವರು ಈ ದೇಶಕ್ಕೂ, ಈ ಆಲಯಕ್ಕೂ ಹೀಗೆ ಏಕೆ ಮಾಡಿದರು?’ ಎಂದು ಕೇಳುವರು.</verse>
				<verse number="9">ಅದಕ್ಕೆ ಜನರು, ‘ತಮ್ಮ ತಂದೆಗಳನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು ಅನ್ಯದೇವರುಗಳನ್ನು ಹಿಂಬಾಲಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಯೆಹೋವ ದೇವರು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಾರೆಂದು ಹೇಳುವರು,’ ” ಎಂದರು.</verse>
				<verse number="10">ಅರಸನಾದ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಆ ಎರಡು ಮನೆಗಳನ್ನು ಅಂದರೆ, ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ ಕಟ್ಟಿಸಿ ತೀರಿಸಿದ ತರುವಾಯ</verse>
				<verse number="11">ಸೊಲೊಮೋನನ ಇಷ್ಟದ ಪ್ರಕಾರ ಟೈರಿನ ಅರಸನಾದ ಹೀರಾಮನು ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಚಿನ್ನವನ್ನೂ ಕೊಟ್ಟಿದ್ದರಿಂದ ಸೊಲೊಮೋನನು ಟೈರಿನ ಅರಸನಾದ ಹೀರಾಮನಿಗೆ ಗಲಿಲಾಯ ದೇಶದಲ್ಲಿನ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.</verse>
				<verse number="12">ಆಗ ಹೀರಾಮನು ಟೈರಿನಿಂದ ಸೊಲೊಮೋನನು ತನಗೆ ಕೊಟ್ಟ ಪಟ್ಟಣಗಳನ್ನು ನೋಡಲು ಬಂದನು. ಆದರೆ ಅವು ಅವನಿಗೆ ಮೆಚ್ಚಿಕೆಯಾಗಿರಲಿಲ್ಲ.</verse>
				<verse number="13">ಆದ್ದರಿಂದ ಅವನು, “ನನ್ನ ಸಹೋದರನೇ, ನೀನು ನನಗೆ ಎಂಥಾ ಪಟ್ಟಣಗಳನ್ನು ಕೊಟ್ಟಿರುವೆ?” ಎಂದು ಹೇಳಿ, ಅವುಗಳಿಗೆ ಕಾಬೂಲ್ ದೇಶವೆಂದು ಹೆಸರಿಟ್ಟನು. ಇಂದಿನವರೆಗೂ ಅವಕ್ಕೆ ಅದೇ ಹೆಸರು.</verse>
				<verse number="14">ಹೀರಾಮನು ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂ ಚಿನ್ನವನ್ನು ಕಳುಹಿಸಿದನು.</verse>
				<verse number="15">ಅರಸನಾದ ಸೊಲೊಮೋನನು ದಾಸರನ್ನು ಕೂಡಿಸಿದ ಕಾರಣವೇನೆಂದರೆ, ಯೆಹೋವ ದೇವರ ಮಂದಿರವನ್ನೂ, ತನ್ನ ಅರಮನೆಯನ್ನೂ, ಮಿಲ್ಲೋವನ್ನೂ, ಯೆರೂಸಲೇಮಿನ ಗೋಡೆಯನ್ನೂ, ಹಾಚೋರನ್ನೂ, ಮೆಗಿದ್ದೋವನ್ನೂ, ಗೆಜೆರನ್ನೂ ಕಟ್ಟುವುದಕ್ಕೋಸ್ಕರವೇ.</verse>
				<verse number="16">ಈಜಿಪ್ಟಿನ ಅರಸನಾದ ಫರೋಹನು ಹೊರಟುಹೋಗಿ, ಗೆಜೆರನ್ನು ತೆಗೆದುಕೊಂಡು, ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟು, ಪಟ್ಟಣದಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಕೊಂದು, ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಅದನ್ನು ಬಹುಮಾನವಾಗಿ ಕೊಟ್ಟನು.</verse>
				<verse number="17">ಹೀಗೆಯೇ ಸೊಲೊಮೋನನು ಗೆಜೆರನ್ನೂ, ಕೆಳಗಿನ ಬೇತ್ ಹೋರೋನನ್ನೂ,</verse>
				<verse number="18">ಬಾಲಾತನ್ನೂ, ಮರುಭೂಮಿಯಲ್ಲಿರುವ ತದ್ಮೋರ್ ಎಂಬ ಸ್ಥಳವನ್ನೂ ಕಟ್ಟಿಸಿದನು.</verse>
				<verse number="19">ಇದಲ್ಲದೆ ಸೊಲೊಮೋನನು ಉಗ್ರಾಣದ ಪಟ್ಟಣಗಳನ್ನೂ, ತನ್ನ ರಾಹುತರಿಗೋಸ್ಕರ ಮತ್ತು ರಥಗಳಿಗೋಸ್ಕರ ಪಟ್ಟಣಗಳನ್ನೂ ಕಟ್ಟಿಸಿದನು. ಯೆರೂಸಲೇಮಿನಲ್ಲಿಯೂ, ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು.</verse>
				<verse number="20">ಇಸ್ರಾಯೇಲರಲ್ಲದ ಅಮೋರಿಯರು, ಹಿತ್ತಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು, ಇವರಲ್ಲಿ ಉಳಿದ ಸಮಸ್ತ ಜನರನ್ನೂ</verse>
				<verse number="21">ಇಸ್ರಾಯೇಲರು ಸಂಹರಿಸದೆ ಉಳಿಸಿದ್ದ ಅವರ ಮಕ್ಕಳನ್ನೂ ಸೊಲೊಮೋನನು ಇಂದಿನವರೆಗೂ ದಾಸತ್ವಕ್ಕಾಗಿ ನೇಮಿಸಿದನು.</verse>
				<verse number="22">ಆದರೆ ಸೊಲೊಮೋನನು ಇಸ್ರಾಯೇಲರನ್ನು ದಾಸರಾಗಿ ಮಾಡಲಿಲ್ಲ. ಅವರು ಯುದ್ಧಭಟರಾಗಿಯೂ, ಅವನ ಅಧಿಪತಿಯಾಗಿಯೂ, ತನ್ನ ಕೈಕೆಳಗಿರುವ ಅವನ ಪ್ರಧಾನರಾಗಿಯೂ, ಅಧಿಕಾರಿಗಳಾಗಿಯೂ, ತನ್ನ ರಥಗಳ ಮೇಲೆಯೂ, ರಾಹುತರ ಮೇಲೆಯೂ ಅಧಿಪತಿಗಳಾಗಿಯೂ ಇದ್ದರು.</verse>
				<verse number="23">ಇದರೊಳಗೆ ಐದು ನೂರ ಐವತ್ತು ಮಂದಿ ಸೊಲೊಮೋನನ ಕೆಲಸದ ಪ್ರಧಾನ ಅಧಿಕಾರಿಗಳಾಗಿದ್ದರು. ಇವರು ಕೆಲಸದಲ್ಲಿ ಕಷ್ಟಪಡುವ ಜನರ ಮೇಲೆ ಅಧಿಕಾರಿಗಳಾಗಿದ್ದರು.</verse>
				<verse number="24">ಆದರೆ ಫರೋಹನ ಮಗಳು ದಾವೀದನ ಪಟ್ಟಣದಿಂದ ತನಗೋಸ್ಕರ ಸೊಲೊಮೋನನು ಕಟ್ಟಿಸಿದ ಪಟ್ಟಣಕ್ಕೆ ಬಂದಳು. ಆಗ ಅವನು ಮಿಲ್ಲೋವನ್ನು ಕಟ್ಟಿಸಿದನು.</verse>
				<verse number="25">ವರುಷಕ್ಕೆ ಮೂರು ಸಾರಿ ಸೊಲೊಮೋನನು ಯೆಹೋವ ದೇವರಿಗೆ ತಾನು ಕಟ್ಟಿಸಿದ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ, ಯೆಹೋವ ದೇವರ ಮುಂದಿರುವ ಪೀಠದ ಮೇಲೆ ಧೂಪವನ್ನು ಸುಡುತ್ತಿದ್ದನು. ಹೀಗೆ ಆಲಯದ ಅರ್ಪಣೆಗಳನ್ನು ಪೂರೈಸಿದನು.</verse>
				<verse number="26">ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದ ಕೆಂಪು ಸಮುದ್ರತೀರದ ಏಲೋತ್ ಎಂಬ ಊರ ಬಳಿಯಲ್ಲಿರುವ ಎಚ್ಯೋನ್ ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು.</verse>
				<verse number="27">ಹೀರಾಮನು ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರ ಸಂಗಡ ಆ ಹಡಗುಗಳಲ್ಲಿ ಕಳುಹಿಸಿದನು.</verse>
				<verse number="28">ಅವರು ಓಫೀರಿಗೆ ಹೋಗಿ, ಅಲ್ಲಿಂದ ಹದಿನಾಲ್ಕು ಸಾವಿರ ಕಿಲೋಗ್ರಾಂ ಬಂಗಾರವನ್ನು ಅರಸನಾದ ಸೊಲೊಮೋನನಿಗೆ ತೆಗೆದುಕೊಂಡು ಬಂದರು.</verse>
			</chapter>
			<chapter number="10">
				<verse number="1">ಶೆಬದ ರಾಣಿಯು ಯೆಹೋವ ದೇವರ ನಾಮದ ಮಹತ್ತಿನಿಂದ ಸೊಲೊಮೋನನ ಕೀರ್ತಿಯನ್ನು ಕೇಳಿದಾಗ, ಒಗಟುಗಳಿಂದ ಅವನನ್ನು ಪರೀಕ್ಷಿಸಲು ಬಂದಳು.</verse>
				<verse number="2">ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ, ಬಹಳಷ್ಟು ಬಂಗಾರವನ್ನೂ, ಅಮೂಲ್ಯವಾದ ರತ್ನಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.</verse>
				<verse number="3">ಆಗ ಸೊಲೊಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು. ಅವುಗಳಲ್ಲಿ ಅರಸನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದ್ದರಿಂದ ಎಲ್ಲವುಗಳಿಗೂ ಉತ್ತರಿಸಿದನು.</verse>
				<verse number="4">ಶೆಬದ ರಾಣಿಯು ಸೊಲೊಮೋನನ ಸಮಸ್ತ ಜ್ಞಾನವನ್ನೂ, ಅವನು ಕಟ್ಟಿಸಿದ ಅರಮನೆಯನ್ನೂ,</verse>
				<verse number="5">ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು.</verse>
				<verse number="6">ಅವಳು ಅರಸನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಸಾಧನೆಗಳ ಕುರಿತೂ, ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯ.</verse>
				<verse number="7">ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವವರೆಗೂ ಜನರ ಮಾತುಗಳನ್ನು ನಂಬದೆ ಹೋದೆನು. ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ. ನಿನ್ನ ಜ್ಞಾನವೂ, ನಿನ್ನ ಸಂಪತ್ತೂ ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಎಷ್ಟೋ ಅಧಿಕವಾಗಿದೆ.</verse>
				<verse number="8">ನಿನ್ನ ಜನರು ಭಾಗ್ಯವಂತರು. ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಅಧಿಪತಿಗಳು ಭಾಗ್ಯವಂತರು.</verse>
				<verse number="9">ಇಸ್ರಾಯೇಲಿನ ಸಿಂಹಾಸನದ ಮೇಲೆ ನಿನ್ನನ್ನು ಕುಳ್ಳಿರಿಸಿದ ನಿನ್ನಲ್ಲಿ ಹರ್ಷಗೊಂಡ ನಿನ್ನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಯೆಹೋವ ದೇವರು ಯುಗಯುಗಕ್ಕೂ ಇಸ್ರಾಯೇಲರನ್ನು ಪ್ರೀತಿಮಾಡಿದ್ದರಿಂದ ನ್ಯಾಯವನ್ನೂ, ನೀತಿಯನ್ನೂ ನಡೆಸಲು ಅವರು ನಿನ್ನನ್ನು ಅರಸನನ್ನಾಗಿ ಮಾಡಿದರು,” ಎಂದಳು.</verse>
				<verse number="10">ಅವಳು ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂ ತೂಕ ಬಂಗಾರವನ್ನೂ, ಬಹು ಸಮೃದ್ಧಿಯಾದ ಸುಗಂಧದ್ರವ್ಯಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟ ಅಪರಿಮಿತವಾದ ಸುಗಂಧದ್ರವ್ಯಗಳ ಹಾಗೆ ಬೇರೆ ಯಾರೂ ಕೊಟ್ಟಿರಲಿಲ್ಲ.</verse>
				<verse number="11">ಹೀರಾಮನ ಹಡಗುಗಳು ಓಫೀರನಿಂದ ಬಂಗಾರ ಮಾತ್ರವಲ್ಲದೆ ಅನೇಕ ಸುಗಂಧದ ಮರಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ತಂದವು.</verse>
				<verse number="12">ಅರಸನು ಆ ಸುಗಂಧದ ಮರಗಳಿಂದ ಯೆಹೋವ ದೇವರ ಆಲಯಕ್ಕೋಸ್ಕರವೂ ಅರಮನೆಗೋಸ್ಕರವೂ ಸ್ತಂಭಗಳನ್ನು ಮಾಡಿಸಿದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ, ವೀಣೆಗಳನ್ನೂ ಮಾಡಿಸಿದನು. ಅಂದಿನಿಂದ ಈ ದಿನದವರೆಗೂ ಅಂಥಾ ಸುಗಂಧದ ಮರಗಳು ಬಂದದ್ದೂ ಇಲ್ಲ, ಕಂಡದ್ದೂ ಇಲ್ಲ.</verse>
				<verse number="13">ಅರಸನಾದ ಸೊಲೊಮೋನನು ಶೆಬದ ರಾಣಿಗೆ ಔದಾರ್ಯವಾಗಿ ಕೊಟ್ಟ ಕಾಣಿಕೆಗಳ ಹೊರತಾಗಿ, ಅವಳು ಬಯಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಅನಂತರ ಅವಳು ತನ್ನ ಸೇವಕರೊಡನೆ ತಿರುಗಿ ತಮ್ಮ ದೇಶಕ್ಕೆ ಹೋದಳು.</verse>
				<verse number="14">ಸೊಲೊಮೋನನಿಗೆ ಪ್ರತಿ ವರುಷ ಸುಮಾರು ಇಪ್ಪತ್ತಮೂರು ಸಾವಿರ ಕಿಲ್ರೊಗ್ರಾಂ ಬಂಗಾರವು ದೊರಕುತ್ತಿತ್ತು.</verse>
				<verse number="15">ಇದಲ್ಲದೆ ಸೊಲೊಮೋನನಿಗೆ ವರ್ತಕರಿಂದಲೂ, ವರ್ತಕರ ವ್ಯಾಪಾರದಿಂದಲೂ, ಅರೇಬಿಯದ ಅರಸರಿಂದಲೂ, ದೇಶದ ಅಧಿಪತಿಗಳಿಂದಲೂ ಸಹ ಬಂಗಾರವು ದೊರಕುತ್ತಿತ್ತು.</verse>
				<verse number="16">ಅರಸನಾದ ಸೊಲೊಮೋನನು ಬಂಗಾರದಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿ ಸುಮಾರು ಏಳು ಕಿಲೋಗ್ರಾಂ ತೂಕದ ಬಂಗಾರವಿತ್ತು.</verse>
				<verse number="17">ಹಾಗೆಯೇ ಬಂಗಾರದಿಂದ ಮುನ್ನೂರು ಸಣ್ಣ ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ಸುಮಾರು ಎರಡು ಕಿಲೋಗ್ರಾಂ ಬಂಗಾರ ಹಿಡಿಯಿತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.</verse>
				<verse number="18">ಅರಸನು ದಂತದಿಂದ ದೊಡ್ಡ ಸಿಂಹಾಸನವನ್ನು ಮಾಡಿಸಿ, ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿದನು.</verse>
				<verse number="19">ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳಿದ್ದವು. ಈ ಸಿಂಹಾಸನದ ಹಿಂಭಾಗವು ದುಂಡಾಗಿತ್ತು. ಕುಳಿತುಕೊಳ್ಳುವ ಆಸನದ ಎರಡು ಕಡೆಗಳಲ್ಲಿ ಕೈಗಳಿದ್ದವು. ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.</verse>
				<verse number="20">ಹನ್ನೆರಡು ಸಿಂಹಗಳು, ಆರು ಮೆಟ್ಟಲುಗಳ ಮೇಲೆ ಎರಡು ಕಡೆಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇರಲಿಲ್ಲ.</verse>
				<verse number="21">ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಮನೆಯ ಎಲ್ಲಾ ಸಾಮಗ್ರಿಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ, ಆದುದರಿಂದ ಅವನಲ್ಲಿ ಬೆಳ್ಳಿಯ ವಸ್ತು ಒಂದಾದರೂ ಕಾಣಿಸಲಿಲ್ಲ.</verse>
				<verse number="22">ಹೀರಾಮನ ಹಡಗುಗಳ ಜೊತೆಯಲ್ಲಿ ಅರಸನ ಹಡಗುಗಳು ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೆ ಒಂದು ಸಾರಿ ಬಂಗಾರ, ಬೆಳ್ಳಿ, ದಂತ, ಕೋತಿ, ನವಿಲು ಇವುಗಳನ್ನೂ ತರುತ್ತಿದ್ದವು.</verse>
				<verse number="23">ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಸಮಸ್ತ ಅರಸರಿಗಿಂತ ಮಿಗಿಲಾಗಿದ್ದನು.</verse>
				<verse number="24">ದೇವರು ಸೊಲೊಮೋನನ ಹೃದಯದಲ್ಲಿ ಕೊಟ್ಟಿದ್ದ ಜ್ಞಾನವನ್ನು ಕೇಳುವುದಕ್ಕಾಗಿ ಭೂಲೋಕದಲ್ಲಿರುವ ಸಮಸ್ತರೂ ಅವನ ದರ್ಶನವನ್ನು ಬಯಸಿದರು.</verse>
				<verse number="25">ಅವರೆಲ್ಲರೂ ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ, ಬಂಗಾರದ ಪಾತ್ರೆಗಳನ್ನೂ, ವಸ್ತ್ರಗಳನ್ನೂ, ಆಯುಧಗಳನ್ನೂ, ಸುಗಂಧಗಳನ್ನೂ, ಕುದುರೆಗಳನ್ನೂ, ಹೇಸರಗತ್ತೆಗಳನ್ನೂ, ವರುಷ ವರುಷವೂ ನೇಮಕವಾದ ಪ್ರಕಾರ ತರುತ್ತಿದ್ದರು.</verse>
				<verse number="26">ಇದಲ್ಲದೆ ಸೊಲೊಮೋನನು ರಥಗಳನ್ನೂ, ರಾಹುತರನ್ನೂ ಕೂಡಿಸಿದನು. ಸಾವಿರದ ನಾನೂರು ರಥಗಳು, ಹನ್ನೆರಡು ಸಾವಿರ ಕುದುರೆಯ ರಾಹುತರು ಇದ್ದರು. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೇ ಇರಿಸಿದನು, ಉಳಿದವುಗಳನ್ನು ರಥಗಳ ಪಟ್ಟಣಗಳಲ್ಲಿಯೂ ಇರಿಸಿದನು.</verse>
				<verse number="27">ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳಂತೆಯೂ, ದೇವದಾರು ಮರಗಳನ್ನು ತಗ್ಗಿನಲ್ಲಿರುವ ಅತ್ತಿಮರಗಳಂತೆಯೂ ಪರಿಗಣಿಸಲಾಯಿತು.</verse>
				<verse number="28">ಇದಲ್ಲದೆ ಸೊಲೊಮೋನನಿಗೆ ಈಜಿಪ್ಟಿನಿಂದಲೂ ಕುವೆಯಿಂದಲೂ ಕುದುರೆಗಳು ಬರುತ್ತಿದ್ದವು. ಅರಸನ ವರ್ತಕರು ಅವುಗಳನ್ನು ಹಿಂಡುಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು.</verse>
				<verse number="29">ಹಾಗೆಯೇ ಈಜಿಪ್ಟಿನಿಂದ ಆರುನೂರು ಬೆಳ್ಳಿ ನಾಣ್ಯಗಳ ಕ್ರಯಕ್ಕೆ ಒಂದು ರಥವನ್ನೂ ನೂರ ಐವತ್ತು ಬೆಳ್ಳಿ ನಾಣ್ಯಗಳ ಕ್ರಯಕ್ಕೆ ಒಂದು ಕುದುರೆಯನ್ನೂ ತರಿಸುತ್ತಿದ್ದರು. ಈ ಪ್ರಕಾರ ಹಿತ್ತಿಯರ ಮತ್ತು ಅರಾಮಿನ ಅರಸುಗಳೆಲ್ಲರು ಇವರ ಮುಖಾಂತರವಾಗಿಯೇ ತರಿಸುತ್ತಿದ್ದರು.</verse>
			</chapter>
			<chapter number="11">
				<verse number="1">ಅರಸನಾದ ಸೊಲೊಮೋನನು ಫರೋಹನ ಮಗಳನ್ನಲ್ಲದೆ ಮೋವಾಬ್ಯರ, ಅಮ್ಮೋನ್ಯರ, ಎದೋಮ್ಯರ, ಸೀದೋನ್ಯರ, ಹಿತ್ತಿಯರ ಸ್ತ್ರೀಯರನ್ನೂ ಪ್ರೀತಿಮಾಡಿದನು.</verse>
				<verse number="2">ಈ ಜನಾಂಗಗಳನ್ನು ಕುರಿತು ಯೆಹೋವ ದೇವರು ಇಸ್ರಾಯೇಲರಿಗೆ, “ನೀವು ಅವರ ಬಳಿಗೆ ಪ್ರವೇಶಿಸಬಾರದು. ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು,” ಎಂದು ಹೇಳಿದ್ದರು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು.</verse>
				<verse number="3">ಅವನಿಗೆ ರಾಜಪುತ್ರಿಯರಾದ ಏಳು ನೂರು ಮಂದಿ ಪತ್ನಿಯರೂ, ಮುನ್ನೂರು ಮಂದಿ ಉಪಪತ್ನಿಯರೂ ಇದ್ದರು. ಅವನ ಪತ್ನಿಯರು ಅವನನ್ನು ದಾರಿ ತಪ್ಪಿಸಿದರು.</verse>
				<verse number="4">ಸೊಲೊಮೋನನು ಮುದುಕನಾದ ಕಾಲದಲ್ಲಿ ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗಿಸಿದರು. ಅವನ ಹೃದಯವು ತನ್ನ ತಂದೆ ದಾವೀದನ ಹೃದಯದ ಹಾಗೆ ತನ್ನ ದೇವರಾದ ಯೆಹೋವ ದೇವರ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.</verse>
				<verse number="5">ಸೊಲೊಮೋನನು ಸೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ, ಅಮ್ಮೋನ್ಯರ ಅಸಹ್ಯಕರವಾದ ಮಿಲ್ಕೋಮನ್ನೂ ಹಿಂಬಾಲಿಸಿದನು.</verse>
				<verse number="6">ಸೊಲೊಮೋನನು ತನ್ನ ತಂದೆ ದಾವೀದನ ಹಾಗೆ ಯೆಹೋವ ದೇವರನ್ನು ಪೂರ್ಣವಾಗಿ ಹಿಂಬಾಲಿಸದೆ ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.</verse>
				<verse number="7">ಆಗ ಸೊಲೊಮೋನನು ಮೋವಾಬಿನ ಅಸಹ್ಯಕರವಾದ ಕೆಮೋಷಿಗೋಸ್ಕರವೂ, ಅಮ್ಮೋನ್ಯರ ಅಸಹ್ಯಕರವಾದ ಮೋಲೆಕನಿಗೋಸ್ಕರವೂ ಯೆರೂಸಲೇಮಿನ ಪೂರ್ವದಲ್ಲಿರುವ ಬೆಟ್ಟದಲ್ಲಿ ಎತ್ತರವಾದ ಸ್ಥಳವನ್ನು ಕಟ್ಟಿಸಿದನು.</verse>
				<verse number="8">ಇದೇ ಪ್ರಕಾರ ತಮ್ಮ ದೇವರುಗಳಿಗೆ ಧೂಪವನ್ನು ಸುಟ್ಟು, ಬಲಿಗಳನ್ನು ಅರ್ಪಿಸುವ ತನ್ನ ಅನ್ಯಜಾತಿಯ ಸಮಸ್ತ ಪತ್ನಿಯರಿಗೋಸ್ಕರವೂ ಕಟ್ಟಿಸಿದನು.</verse>
				<verse number="9">ಇಸ್ರಾಯೇಲಿನ ದೇವರಾದ ಯೆಹೋವ ದೇವರು ಸೊಲೊಮೋನನಿಗೆ ಎರಡು ಸಾರಿ ಪ್ರತ್ಯಕ್ಷರಾಗಿದ್ದರೂ, ಅವನ ಹೃದಯವು ದೇವರಿಂದ ತಿರುಗಿ ಹೋದುದರಿಂದ, ಅವನ ಮೇಲೆ ಕೋಪಿಸಿಕೊಂಡಿದ್ದರು.</verse>
				<verse number="10">ಅನ್ಯದೇವರುಗಳ ಹಿಂದೆ ಹೋಗಬಾರದೆಂದು ಅವರು ಇದನ್ನು ಕುರಿತು ಅವನಿಗೆ ಆಜ್ಞಾಪಿಸಿದ್ದರೂ, ಅವನು, ಯೆಹೋವ ದೇವರು ಆಜ್ಞಾಪಿಸಿದ್ದನ್ನು ಕೈಗೊಳ್ಳದೆ ಹೋದನು.</verse>
				<verse number="11">ಆದಕಾರಣ ಯೆಹೋವ ದೇವರು ಸೊಲೊಮೋನನಿಗೆ, “ನೀನು ಹೀಗೆ ನಡೆದು ನಾನು ನಿನಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನೂ, ನನ್ನ ಕಟ್ಟಳೆಗಳನ್ನೂ ಕೈಗೊಳ್ಳದೆ ಹೋದುದರಿಂದ ನಿಶ್ಚಯವಾಗಿ ನಾನು ರಾಜ್ಯವನ್ನು ನಿನ್ನಿಂದ ಕಸಿದುಕೊಂಡು ಅದನ್ನು ನಿನ್ನ ಸೇವಕನಿಗೆ ಕೊಡುವೆನು.</verse>
				<verse number="12">ಆದರೆ ನಿನ್ನ ತಂದೆ ದಾವೀದನಿಗೋಸ್ಕರ ನಿನ್ನ ಕಾಲದಲ್ಲಿ ನಾನು ಇದನ್ನು ಮಾಡದೆ ನಿನ್ನ ಮಗನ ಕೈಯೊಳಗಿಂದ ಅದನ್ನು ಕಸಿದುಕೊಳ್ಳುವೆನು.</verse>
				<verse number="13">ಇದಲ್ಲದೆ ರಾಜ್ಯವನ್ನೆಲ್ಲಾ ನಾನು ಕಸಿದುಕೊಳ್ಳದೆ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ, ನಾನು ಆಯ್ದುಕೊಂಡ ಯೆರೂಸಲೇಮಿಗೋಸ್ಕರವೂ ನಿನ್ನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು,” ಎಂದರು.</verse>
				<verse number="14">ಆಗ ಯೆಹೋವ ದೇವರು ಎದೋಮ್ಯನಾದ ಹದದನನ್ನು ಸೊಲೊಮೋನನಿಗೆ ಎದುರಾಳಿಯಾಗಿ ಎಬ್ಬಿಸಿದರು.</verse>
				<verse number="15">ದಾವೀದನು ಎದೋಮಿನಲ್ಲಿರುವಾಗ ಸೇನಾಧಿಪತಿಯಾದ ಯೋವಾಬನು ಎದೋಮಿನ ಗಂಡಸರೆಲ್ಲರನ್ನು ಕೊಂದುಹಾಕಿದನು. ತರುವಾಯ ಇಸ್ರಾಯೇಲರಲ್ಲಿ ಹತರಾದವರನ್ನು ಸಮಾಧಿಮಾಡಲು ಹೋದನು.</verse>
				<verse number="16">ಯೋವಾಬನು ಎದೋಮಿನಲ್ಲಿರುವ ಗಂಡಸರೆಲ್ಲರನ್ನು ಸಂಹರಿಸುವವರೆಗೂ ಇಸ್ರಾಯೇಲಿನ ಸಮಸ್ತ ಸೈನ್ಯದ ಸಂಗಡ ಅಲ್ಲಿ ಆರು ತಿಂಗಳು ಇದ್ದನು.</verse>
				<verse number="17">ಆದರೆ ಆ ಸಮಯದಲ್ಲಿ ಇನ್ನೂ ಬಾಲಕನಾದ ಹದಾದನು ತನ್ನ ತಂದೆಯ ಕೆಲವು ಸೇವಕರಾದ ಎದೋಮ್ಯರ ಸಂಗಡ ಈಜಿಪ್ಟಿಗೆ ಓಡಿಹೋಗಬೇಕೆಂದು ಹೊರಟನು.</verse>
				<verse number="18">ಮಿದ್ಯಾನನ್ನು ಬಿಟ್ಟು ಪಾರಾನಿಗೆ ಬಂದು ಅಲ್ಲಿಂದ ಮನುಷ್ಯರನ್ನು ತೆಗೆದುಕೊಂಡು ಈಜಿಪ್ಟಿನಲ್ಲಿ ಪ್ರವೇಶಿಸಿ ಈಜಿಪ್ಟಿನ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಮನೆಯನ್ನು, ಆಹಾರವನ್ನು ಮತ್ತು ಭೂಮಿಯನ್ನು ಕೊಟ್ಟನು.</verse>
				<verse number="19">ಇದಲ್ಲದೆ ಫರೋಹನು ಹದದನನ್ನು ಬಹಳವಾಗಿ ಮೆಚ್ಚಿಕೊಂಡನು. ಫರೋಹನು ತನ್ನ ಹೆಂಡತಿಯೂ ರಾಣಿಯೂ ಆದ ತಪ್ನೆಸ್ ಎಂಬವಳ ಸಹೋದರಿಯನ್ನು ಅವನಿಗೆ ಮದುವೆ ಮಾಡಿಕೊಟ್ಟನು.</verse>
				<verse number="20">ತಪ್ನೆಸ್ ಸಹೋದರಿಯು ಅವನಿಗೆ ಗೆನುಬತ್ ಎಂಬ ಮಗನನ್ನು ಹೆತ್ತಳು. ತಪ್ನೆಸ್ ಇವನನ್ನು ಫರೋಹನ ಮನೆಯಲ್ಲಿ ಬೆಳೆಸಿದಳು. ಗೆನುಬತನು ಫರೋಹನ ಮನೆಯಲ್ಲಿ ಫರೋಹನ ಮಕ್ಕಳ ಸಂಗಡ ಇದ್ದನು.</verse>
				<verse number="21">ಆದರೆ ದಾವೀದನು ಮರಣ ಹೊಂದಿದನೆಂದೂ, ಸೇನಾಧಿಪತಿಯಾದ ಯೋವಾಬನು ಸತ್ತು ಹೋದನೆಂದೂ, ಹದದನು ಈಜಿಪ್ಟಿನಲ್ಲಿ ಕೇಳಿದಾಗ, ಹದದನು ಫರೋಹನಿಗೆ, “ನಾನು ನನ್ನ ದೇಶಕ್ಕೆ ಹೋಗುವಹಾಗೆ ನನ್ನನ್ನು ಕಳುಹಿಸು,” ಎಂದನು.</verse>
				<verse number="22">ಫರೋಹನು ಅವನಿಗೆ, “ನೀನು ನಿನ್ನ ದೇಶಕ್ಕೆ ಹೋಗಬೇಕೆನ್ನುವ ಹಾಗೆ ನಿನಗೆ ನನ್ನ ಸಂಗಡ ಇರುವಾಗ ಏನು ಕೊರತೆಯಾಯಿತು?” ಎಂದು ಕೇಳಿದನು. ಅವನು, “ಏನೂ ಇಲ್ಲ, ಆದರೆ ನಾನು ಅಲ್ಲಿಗೆ ಹೋಗಲು ಅಪ್ಪಣೆಯಾಗಬೇಕು,” ಎಂದನು.</verse>
				<verse number="23">ಇದಲ್ಲದೆ ದೇವರು ಮತ್ತೊಬ್ಬ ಶತ್ರುವನ್ನು ಸೊಲೊಮೋನನ ಮೇಲೆ ಎಬ್ಬಿಸಿದರು. ಅವನು ಚೋಬದ ಅರಸನಾದ ತನ್ನ ಯಜಮಾನನಾಗಿರುವ ಹದದೆಜೆರನನ್ನು ಬಿಟ್ಟು ಓಡಿ ಹೋದ ಎಲ್ಯಾದಾವನ ಮಗನಾದ ರೆಜೋನನು.</verse>
				<verse number="24">ದಾವೀದನು ಚೋಬದ ಜನರನ್ನು ಸಂಹರಿಸುವಾಗ ಇವನು ಜನರನ್ನು ತನ್ನ ಬಳಿಯಲ್ಲಿ ಕೂಡಿಸಿಕೊಂಡು ಒಂದು ಗುಂಪಿಗೆ ಅಧಿಪತಿಯಾಗಿ ಅವರ ಸಂಗಡ ದಮಸ್ಕಕ್ಕೆ ಹೋಗಿ ಅಲ್ಲಿ ವಾಸಿಸಿ, ಅರಸನಾದನು.</verse>
				<verse number="25">ಹದದನು ಮಾಡಿದ ಕೇಡಿಗೆ ಹೊರತಾಗಿ ಇವನು ಸೊಲೊಮೋನನ ದಿವಸಗಳಲ್ಲೆಲ್ಲಾ ಇಸ್ರಾಯೇಲಿಗೆ ಶತ್ರುವಾಗಿದ್ದನು. ಅವನು ಇಸ್ರಾಯೇಲನ್ನು ಹಗೆಮಾಡಿ, ಅರಾಮ್ ದೇಶವನ್ನು ಆಳುತ್ತಾ ಇದ್ದನು.</verse>
				<verse number="26">ಇದಲ್ಲದೆ, ಅರಸನಾದ ಸೊಲೊಮೋನನಿಗೆ ವಿರೋಧವಾಗಿ ದಂಗೆ ಎದ್ದವರಲ್ಲಿ ಅವನ ಸೇವಕನೂ ಚರೇದ ಪಟ್ಟಣದ ಎಫ್ರಾಯೀಮ್ಯನಾದ ನೆಬಾಟನ ಮಗ ಯಾರೊಬ್ಬಾಮನು ಇದ್ದನು, ಚೆರೂಯಳೆಂಬ ವಿಧವೆಯು ಅವನ ತಾಯಿಯು.</verse>
				<verse number="27">ಅವನು ಅರಸನಿಗೆ ವಿರೋಧವಾಗಿ ದಂಗೆಯೆದ್ದ ಕಾರಣವೇನೆಂದರೆ, ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿ, ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಬಿದ್ದುಹೋದವುಗಳನ್ನು ಕಟ್ಟಿಸುತ್ತಿರುವಾಗ,</verse>
				<verse number="28">ಯಾರೊಬ್ಬಾಮನು ಪರಾಕ್ರಮಶಾಲಿಯಾಗಿರುವುದರಿಂದ ಸೊಲೊಮೋನನು ಈ ಪ್ರಾಯಸ್ಥನು ಕೆಲಸಮಾಡತಕ್ಕವನೆಂದು ಕಂಡು, ಯೋಸೇಫನ ಗೋತ್ರದ ಸಮಸ್ತ ಆಳುಗಳ ಮೇಲೆ ಅವನನ್ನು ಅಧಿಪತಿಯಾಗಿಟ್ಟನು.</verse>
				<verse number="29">ಆ ಕಾಲದಲ್ಲಿ, ಯಾರೊಬ್ಬಾಮನು ಯೆರೂಸಲೇಮಿನೊಳಗಿಂದ ಹೊರಟು ಹೋಗುವಾಗ, ಶೀಲೋವಿನವನಾದ ಅಹೀಯನೆಂಬ ಪ್ರವಾದಿಯು ಅವನನ್ನು ಹಾದಿಯಲ್ಲಿ ಕಂಡನು. ಅವನು ಹೊಸ ಕಂಬಳಿಯನ್ನು ಹೊದ್ದುಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾಗಿದ್ದರು.</verse>
				<verse number="30">ಆಗ ಅಹೀಯನು ತನ್ನ ಮೇಲೆ ಇರುವ ಹೊಸ ಕಂಬಳಿಯನ್ನು ತೆಗೆದುಕೊಂಡು ಅದನ್ನು ಹನ್ನೆರಡು ತುಂಡುಗಳಾಗಿ ಹರಿದು,</verse>
				<verse number="31">ಯಾರೊಬ್ಬಾಮನಿಗೆ ಈ ಹತ್ತು ತುಂಡುಗಳನ್ನು ನೀನು ತೆಗೆದುಕೋ. ಇಸ್ರಾಯೇಲಿನ ದೇವರಾದ ಯೆಹೋವ ದೇವರು, “ಇಗೋ, ನಾನು ಸೊಲೊಮೋನನ ಕೈಯಿಂದ ರಾಜ್ಯವನ್ನು ಹರಿದು ತೆಗೆದುಕೊಂಡು, ಹತ್ತು ಗೋತ್ರಗಳನ್ನು ನಿನಗೆ ಕೊಡುವೆನು.</verse>
				<verse number="32">ಆದರೆ, ನನ್ನ ಸೇವಕ ದಾವೀದನಿಗೋಸ್ಕರವೂ, ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವುದು.</verse>
				<verse number="33">ಏಕೆಂದರೆ ಅವನ ತಂದೆಯಾದ ದಾವೀದನ ಹಾಗೆ ನನ್ನ ಕಟ್ಟಳೆಗಳನ್ನೂ, ನನ್ನ ನ್ಯಾಯಗಳನ್ನೂ ಕೈಗೊಳ್ಳುವುದಕ್ಕೂ, ನನ್ನ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡುವುದಕ್ಕೂ, ಸೊಲೊಮೋನನೂ ಅವನ ಮನೆಯವರೂ ನನ್ನ ಮಾರ್ಗಗಳಲ್ಲಿ ನಡೆಯದೆ, ನನ್ನನ್ನು ಬಿಟ್ಟು ಸೀದೋನ್ಯರ ದೇವತೆಯಾದ ಅಷ್ಟೋರೆತಳನ್ನೂ, ಮೋವಾಬ್ಯರ ದೇವರಾದ ಕೆಮೋಷನ್ನೂ, ಅಮ್ಮೋನಿಯರ ದೇವರಾದ ಮಿಲ್ಕೋಮನ್ನೂ ಆರಾಧಿಸಿದ್ದಾರೆ.</verse>
				<verse number="34">“ ‘ಆದರೂ ನನ್ನ ಆಜ್ಞೆಗಳನ್ನೂ, ನನ್ನ ತೀರ್ಪುಗಳನ್ನೂ ಕೈಗೊಂಡದ್ದರಿಂದ, ನಾನು ಆಯ್ದು ತೆಗೆದುಕೊಂಡ ನನ್ನ ಸೇವಕನಾದ ದಾವೀದನಿಗೋಸ್ಕರ ನಾನು ಅವನ ಕೈಯಿಂದ ರಾಜ್ಯವನ್ನೆಲ್ಲಾ ತೆಗೆದುಕೊಳ್ಳದೆ, ಅವನ ಜೀವಮಾನದ ಸಕಲ ದಿವಸಗಳಲ್ಲಿ ಅವನನ್ನು ಪ್ರಭುವಾಗಿ ಇರಿಸುವೆನು.</verse>
				<verse number="35">ಆದರೆ ನಾನು ಅವನ ಮಗನ ಕೈಯಿಂದ ರಾಜ್ಯವನ್ನು ತೆಗೆದುಕೊಂಡು, ಅದರಲ್ಲಿ ಹತ್ತು ಗೋತ್ರಗಳನ್ನು ನಿನಗೆ ಕೊಡುವೆನು.</verse>
				<verse number="36">ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಎಂದಿಗೂ ಬೆಳಕು ಆರಿಹೋಗದ ಹಾಗೆ, ಅವನ ಮಗನಿಗೆ ಒಂದು ಗೋತ್ರವನ್ನು ಕೊಡುವೆನು.</verse>
				<verse number="37">ಇದಲ್ಲದೆ ನಾನು ನಿನ್ನನ್ನು ತೆಗೆದುಕೊಂಡು, ನಿನ್ನ ಪ್ರಾಣವು ಇಚ್ಛಿಸುವುದೆಲ್ಲಾದರಲ್ಲಿ ಅರಸುತನವನ್ನು ನಡೆಸಿ, ಇಸ್ರಾಯೇಲಿನ ಮೇಲೆ ಅರಸನಾಗಿರುವಿ.</verse>
				<verse number="38">ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ, ನನ್ನ ಮಾರ್ಗಗಳಲ್ಲಿ ನಡೆದು, ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ, ನನ್ನ ತೀರ್ಪುಗಳನ್ನೂ, ನನ್ನ ಆಜ್ಞೆಗಳನ್ನೂ ಕೈಗೊಂಡು, ನನ್ನ ದೃಷ್ಟಿಗೆ ಯಥಾರ್ಥವಾದದ್ದನ್ನು ಮಾಡಿದರೆ, ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸಿ, ಇಸ್ರಾಯೇಲನ್ನು ನಿನಗೆ ಕೊಡುವೆನು.</verse>
				<verse number="39">ಇದಕ್ಕೋಸ್ಕರ ದಾವೀದನ ಸಂತತಿಯನ್ನು ಬಾಧಿಸುವೆನು, ಆದರೆ ನಿರಂತರವಾಗಿ ಅಲ್ಲ,’ ” ಎಂದು ಅಹೀಯನು ಹೇಳಿದನು.</verse>
				<verse number="40">ಇದರ ನಿಮಿತ್ತ ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲಲು ಹುಡುಕಿದನು. ಆದ್ದರಿಂದ ಯಾರೊಬ್ಬಾಮನು ಎದ್ದು, ಈಜಿಪ್ಟಿನ ಅರಸನಾದ ಶೀಶಕನ ಬಳಿಗೆ ಈಜಿಪ್ಟಿಗೆ ಓಡಿಹೋಗಿ, ಸೊಲೊಮೋನನು ಸಾಯುವವರೆಗೂ ಅಲ್ಲಿ ಇದ್ದನು.</verse>
				<verse number="41">ಸೊಲೊಮೋನನ ಉಳಿದ ಕ್ರಿಯೆಗಳನ್ನು, ಅವನು ಮಾಡಿದ ಸಾಧನೆಗಳನ್ನು ಮತ್ತು ಅವನ ಜ್ಞಾನವನ್ನು ಕುರಿತು ಸೊಲೊಮೋನನ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತದೆ.</verse>
				<verse number="42">ಹೀಗೆ ಸೊಲೊಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲಿನ ಮೇಲೆ ನಾಲ್ವತ್ತು ವರ್ಷಗಳು ಆಳಿದನು.</verse>
				<verse number="43">ಸೊಲೊಮೋನನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ಅವನ ತಂದೆ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ರೆಹಬ್ಬಾಮನು ಅವನಿಗೆ ಬದಲಾಗಿ ಅರಸನಾದನು.</verse>
			</chapter>
			<chapter number="12">
				<verse number="1">ರೆಹಬ್ಬಾಮನು ಶೆಕೆಮಿಗೆ ಹೋದನು; ಅವನನ್ನು ಅರಸನಾಗಿ ಮಾಡುವುದಕ್ಕೆ ಸಮಸ್ತ ಇಸ್ರಾಯೇಲರು ಶೆಕೆಮಿಗೆ ಬಂದರು.</verse>
				<verse number="2">ಅರಸನಾದ ಸೊಲೊಮೋನನ ಸಮ್ಮುಖದಿಂದ ಓಡಿಹೋಗಿ ಈಜಿಪ್ಟಿನಲ್ಲಿ ವಾಸವಾಗಿದ್ದ ನೆಬಾಟನ ಮಗ ಯಾರೊಬ್ಬಾಮನು ಇದನ್ನು ಕೇಳಿದಾಗ, ಅವನು ಈಜಿಪ್ಟಿನಿಂದ ತಿರುಗಿಬಂದನು.</verse>
				<verse number="3">ಆಗ ಯಾರೊಬ್ಬಾಮನೂ ಸಮಸ್ತ ಇಸ್ರಾಯೇಲರೂ ರೆಹಬ್ಬಾಮನ ಬಳಿಗೆ ಬಂದು, ಅವನ ಸಂಗಡ ಮಾತನಾಡಿ,</verse>
				<verse number="4">“ನಿನ್ನ ತಂದೆಯು ನಮ್ಮ ನೊಗವನ್ನು ಭಾರವಾಗಿ ಮಾಡಿದನು. ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ, ಅವನು ನಮ್ಮ ಮೇಲೆ ಹಾಕಿದ ಅವನ ಭಾರವಾದ ನೊಗವನ್ನೂ ಹಗುರಮಾಡಿದರೆ, ನಾವು ನಿನಗೆ ಸೇವೆಮಾಡುತ್ತೇವೆ,” ಎಂದರು.</verse>
				<verse number="5">ಅವನು ಅವರಿಗೆ, “ನೀವು ಹೋಗಿ ಮೂರು ದಿವಸಗಳಾದ ತರುವಾಯ ತಿರುಗಿ ನನ್ನ ಬಳಿಗೆ ಬನ್ನಿರಿ,” ಎಂದು ಹೇಳಿದ್ದರಿಂದ ಜನರು ಹೊರಟು ಹೋದರು.</verse>
				<verse number="6">ಆಗ ಅರಸನಾದ ರೆಹಬ್ಬಾಮನು ತನ್ನ ತಂದೆ ಸೊಲೊಮೋನನು ಬದುಕಿರುವಾಗ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ ಅವರಿಗೆ, “ನಾನು ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ನಿಮ್ಮ ಆಲೋಚನೆಯೇನು?” ಎಂದು ಕೇಳಿದನು.</verse>
				<verse number="7">ಅವರು ಅವನಿಗೆ, “ನೀನು ಇಂದು ಈ ಜನರಿಗೆ ಸೇವಕನಾಗಿ ಅವರನ್ನು ಸೇವಿಸಿ, ಒಳ್ಳೆಯ ಮಾತುಗಳಿಂದ ಅವರಿಗೆ ಉತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು,” ಎಂದು ಹೇಳಿದರು.</verse>
				<verse number="8">ಆದರೆ ರೆಹಬ್ಬಾಮನು, ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು, ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಕೇಳಿ,</verse>
				<verse number="9">ಅವನು ಅವರಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಉತ್ತರ ಕೊಡಲು ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.</verse>
				<verse number="10">ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವನಿಗೆ, “ನಿನ್ನ ತಂದೆಯು ನಮ್ಮ ನೊಗವನ್ನು ಭಾರಮಾಡಿದನು. ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ, ‘ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರುವುದು.</verse>
				<verse number="11">ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು. ಆದರೆ ನಾನು ನಿಮ್ಮ ನೊಗವನ್ನು ಇನ್ನೂ ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ, ನಾನಾದರೋ ನಿಮ್ಮನ್ನು ಚೇಳು ಕೊರಡೆಗಳಿಂದ ಶಿಕ್ಷಿಸುವೆನು,’ ಎಂದು ನೀನು ಅವರಿಗೆ ಹೇಳು,” ಎಂದರು.</verse>
				<verse number="12">ಆಗ, “ಮೂರನೆಯ ದಿವಸದಲ್ಲಿ ನನ್ನ ಬಳಿಗೆ ಬನ್ನಿರಿ,” ಎಂದು ಅರಸನು ಹೇಳಿದ ಪ್ರಕಾರ, ಮೂರನೆಯ ದಿವಸದಲ್ಲಿ ಯಾರೊಬ್ಬಾಮನೂ, ಸಮಸ್ತ ಜನರೂ ಅರಸನಾದ ರೆಹಬ್ಬಾಮನ ಬಳಿಗೆ ಬಂದರು.</verse>
				<verse number="13">ಆದರೆ ಅರಸನು ಜನರಿಗೆ ಕಠಿಣವಾದ ಉತ್ತರವನ್ನು ಕೊಟ್ಟು, ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ನಿರಾಕರಿಸಿ,</verse>
				<verse number="14">ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ, “ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗಿ ಮಾಡಿದನು. ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಶಿಕ್ಷಿಸಿದನು. ಆದರೆ ನಾನು ಮುಳ್ಳು ಕೊರಡೆಗಳಿಂದ ಶಿಕ್ಷಿಸುವೆನು,” ಎಂದನು.</verse>
				<verse number="15">ಅರಸನು ಜನರ ಮಾತನ್ನು ಕೇಳದೆಹೋದದ್ದು ಯೆಹೋವ ದೇವರಿಂದಲೇ. ಹೀಗೆ ಯೆಹೋವ ದೇವರು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ಈಡೇರುವುದಕ್ಕೆ ಕಾರಣವಾಯಿತು.</verse>
				<verse number="16">ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲರು ತಿಳಿದಾಗ, ಜನರು ಅರಸನಿಗೆ ಉತ್ತರವಾಗಿ, “ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾಯೇಲರೇ, ನಿಮ್ಮ ಡೇರೆಗಳಿಗೆ ಹೋಗಿರಿ. ದಾವೀದನೇ, ಈಗ ನಿನ್ನ ಕುಟುಂಬವನ್ನು ನೀನೇ ನೋಡಿಕೋ,” ಎಂದು ಹೇಳಿ, ಇಸ್ರಾಯೇಲರು ತಮ್ಮ ತಮ್ಮ ಡೇರೆಗಳಿಗೆ ಹೋದರು.</verse>
				<verse number="17">ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲರ ಮೇಲೆ ರೆಹಬ್ಬಾಮನು ಆಳಿದನು.</verse>
				<verse number="18">ಆಗ ರೆಹಬ್ಬಾಮನು ದಾಸರ ಮೇಲ್ವಿಚಾರಕನಾದ ಅದೋನೀರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲರೆಲ್ಲರು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು. ಆದ್ದರಿಂದ ಅರಸನಾದ ರೆಹಬ್ಬಾಮನು ಆತುರಪಟ್ಟು ತನ್ನ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು.</verse>
				<verse number="19">ಹೀಗೆ ಇಂದಿನವರೆಗೂ ಇಸ್ರಾಯೇಲರು ದಾವೀದನ ಕುಟುಂಬದವರೊಡನೆ ವಿರೋಧವಾಗಿ ತಿರುಗಿಬೀಳುತ್ತಲೇ ಇದ್ದಾರೆ.</verse>
				<verse number="20">ಇಸ್ರಾಯೇಲರು ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ, ಅವರು ಸಭೆಗೆ ಅವನನ್ನು ಕರೆಕಳುಹಿಸಿ, ಸಮಸ್ತ ಇಸ್ರಾಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.</verse>
				<verse number="21">ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ, ರಾಜ್ಯವನ್ನು ತಿರುಗಿ ಪಡೆಯುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು ಬೆನ್ಯಾಮೀನನ ಗೋತ್ರದ ಮತ್ತು ಯೆಹೂದನ ಸಮಸ್ತ ಕುಟುಂಬಗಳಿಂದ 1,80,000 ಸಮರ್ಥ ಸೈನಿಕರನ್ನು ಆಯ್ದುಕೊಂಡು ಒಟ್ಟುಗೂಡಿಸಿದನು.</verse>
				<verse number="22">ಆದರೆ ದೇವರ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಗಿ,</verse>
				<verse number="23">“ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ, ಯೆಹೂದ ಬೆನ್ಯಾಮೀನನ ಸಮಸ್ತ ಮನೆಯವರಿಗೂ ಮತ್ತು ಮಿಕ್ಕಿದ ಜನರಿಗೂ ಹೇಳಬೇಕಾದದ್ದೇನೆಂದರೆ,</verse>
				<verse number="24">‘ನೀವು ಇಸ್ರಾಯೇಲರಾಗಿರುವ ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗಬೇಡಿರಿ. ಪ್ರತಿ ಮನುಷ್ಯನು ತನ್ನ ಮನೆಗೆ ಹಿಂದಿರುಗಲಿ.’ ಏಕೆಂದರೆ ಈ ಕಾರ್ಯವು ತಮ್ಮಿಂದ ಉಂಟಾಯಿತೆಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. ಆದ್ದರಿಂದ ಅವರು ಯೆಹೋವ ದೇವರ ವಾಕ್ಯವನ್ನು ಕೇಳಿ, ಯೆಹೋವ ದೇವರ ವಾಕ್ಯದ ಪ್ರಕಾರವೇ ಹಿಂದಿರುಗಿ ಹೋದರು.</verse>
				<verse number="25">ಯಾರೊಬ್ಬಾಮನು ಎಫ್ರಾಯೀಮನ ಬೆಟ್ಟದಲ್ಲಿ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ, ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೀಯೇಲ್ ಪಟ್ಟಣವನ್ನು ಭದ್ರಪಡಿಸಿದನು.</verse>
				<verse number="26">ಆದರೆ ಯಾರೊಬ್ಬಾಮನು ತನ್ನ ಮನಸ್ಸಿನಲ್ಲಿ, “ಈಗ ರಾಜ್ಯವು ದಾವೀದನ ಮನೆಯವರಿಗೆ ಹಿಂದಿರುಗುವುದು ಏನೋ,</verse>
				<verse number="27">ಈ ಜನರು ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಮಂದಿರಕ್ಕೆ ಬಲಿ ಅರ್ಪಿಸಲು ಹೋದರೆ, ಆಗ ಇವರ ಹೃದಯವು ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ಮತ್ತೆ ತಿರುಗುವುದು. ಅವರು ನನ್ನನ್ನು ಕೊಂದುಹಾಕಿ, ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ತಿರುಗಿ ಹೋದಾರು,” ಎಂದುಕೊಂಡನು.</verse>
				<verse number="28">ಅರಸನು ತನ್ನ ಸಲಹೆಗಾರರನ್ನು ಕೇಳಿ, ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ಯೆರೂಸಲೇಮಿನವರೆಗೂ ಜಾತ್ರೆಗೆ ಹೋಗುವುದು ನಿಮಗೆ ಕಷ್ಟವಾಗಿದೆ. ಇಸ್ರಾಯೇಲರೇ, ಇಗೋ ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರುಗಳು,” ಎಂದನು.</verse>
				<verse number="29">ಒಂದನ್ನು ಬೇತೇಲಿನಲ್ಲಿಯೂ, ಒಂದನ್ನು ದಾನಿನಲ್ಲಿಯೂ ಸ್ಥಾಪಿಸಿದನು.</verse>
				<verse number="30">ಇದು ಪಾಪಕ್ಕೆ ಕಾರಣವಾಯಿತು. ದಾನಿನಲ್ಲಿರುವುದನ್ನು ಪೂಜಿಸಲು ಜನರು ಅಲ್ಲಿಯವರೆಗೆ ಹೋಗುತ್ತಿದ್ದರು.</verse>
				<verse number="31">ಅವನು ಉನ್ನತ ಸ್ಥಳಗಳಲ್ಲಿ ಪೂಜಾಸ್ಥಳಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು.</verse>
				<verse number="32">ಯಾರೊಬ್ಬಾಮನು ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ, ಪೀಠದ ಮೇಲೆ ಬಲಿಗಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿನಲ್ಲಿ ಮಾಡಿ, ಅವನು ರೂಪಿಸಿದ ಕರುಗಳ ವಿಗ್ರಹಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ನೇಮಿಸಿದ ಉನ್ನತ ಸ್ಥಳಗಳ ಯಾಜಕರನ್ನೇ ಇರಿಸಿದನು.</verse>
				<verse number="33">ಹೀಗೆ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಅವನು ಬೇತೇಲಿನಲ್ಲಿ ಕಟ್ಟಿಸಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ, ಇಸ್ರಾಯೇಲರಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.</verse>
			</chapter>
			<chapter number="13">
				<verse number="1">ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ, ಯೆಹೂದದಿಂದ ಬೇತೇಲಿಗೆ ಯೆಹೋವ ದೇವರ ಮಾತಿನಂತೆ ಒಬ್ಬ ದೇವರ ಮನುಷ್ಯ ಬಂದನು.</verse>
				<verse number="2">ಅವನು ಯೆಹೋವ ದೇವರ ಅಪ್ಪಣೆಯಿಂದ ಆ ಪೀಠವನ್ನು ಕುರಿತು: “ಪೀಠವೇ, ಪೀಠವೇ! ದಾವೀದನ ಸಂತಾನದಲ್ಲಿ ಯೋಷೀಯ ಎಂಬ ಹೆಸರುಳ್ಳ ಒಬ್ಬ ಮಗನು ಹುಟ್ಟುವನು. ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು ಬಲಿಯಾಗಿ ಅರ್ಪಿಸುವನು. ಮನುಷ್ಯರ ಎಲುಬುಗಳನ್ನು ನಿನ್ನ ಮೇಲೆ ಸುಡಲಾಗುವವು,” ಎಂದು ಯೆಹೋವ ದೇವರು ಹೇಳುತ್ತಾರೆ ಎಂದನು.</verse>
				<verse number="3">ಅದೇ ದಿವಸದಲ್ಲಿ ಅವನು ಗುರುತನ್ನು ಕೊಟ್ಟು ಅವರಿಗೆ, “ಯೆಹೋವ ದೇವರು ಇದಕ್ಕೆ ಹೇಳಿದ ಗುರುತೇನೆಂದರೆ, ಇಗೋ, ಬಲಿಪೀಠವು ಸೀಳಿಹೋಗಿ, ಅದರ ಮೇಲೆ ಇರುವ ಬೂದಿಯು ಬಿದ್ದುಹೋಗುವುದು,” ಎಂದನು.</verse>
				<verse number="4">ಅರಸನಾದ ಯಾರೊಬ್ಬಾಮನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿ ದೇವರ ಮನುಷ್ಯನು ಹೇಳಿದ ಮಾತನ್ನು ಕೇಳಿದಾಗ, ಅವನು ಪೀಠದ ಬಳಿಯಿಂದ ತನ್ನ ಕೈಚಾಚಿ, “ಅವನನ್ನು ಹಿಡಿಯಿರಿ,” ಎಂದನು. ಆಗ ಅವನಿಗೆ ವಿರೋಧವಾಗಿ ಚಾಚಿದ ಅವನ ಕೈ ಹಿಂದಕ್ಕೆ ಎಳೆದುಕೊಳ್ಳದ ಹಾಗೆ ಒಣಗಿ ಹೋಯಿತು.</verse>
				<verse number="5">ಇದಲ್ಲದೆ ಯೆಹೋವ ದೇವರ ಮಾತಿನಿಂದ ದೇವರ ಮನುಷ್ಯನು ಕೊಟ್ಟ ಗುರುತಿನ ಪ್ರಕಾರವೇ ಬಲಿಪೀಠವು ಸೀಳಿಹೋಗಿ, ಬೂದಿಯು ಬಲಿಪೀಠದಿಂದ ಬಿದ್ದುಹೋಯಿತು.</verse>
				<verse number="6">ಆಗ ಅರಸನು ಉತ್ತರವಾಗಿ ದೇವರ ಮನುಷ್ಯನಿಗೆ, “ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಯೆಹೋವ ದೇವರ ಕಟಾಕ್ಷವನ್ನು ಬೇಡಿಕೊಂಡು, ನನಗೋಸ್ಕರ ಪ್ರಾರ್ಥನೆ ಮಾಡು,” ಎಂದನು. ಆಗ ದೇವರ ಮನುಷ್ಯನು ಯೆಹೋವ ದೇವರ ಕಟಾಕ್ಷವನ್ನು ಬೇಡಿಕೊಂಡದ್ದರಿಂದ ಅರಸನ ಕೈಗುಣವಾಗಿ, ಮುಂಚಿನ ಹಾಗೆ ಆಯಿತು.</verse>
				<verse number="7">ಅರಸನು ದೇವರ ಮನುಷ್ಯನಿಗೆ, “ನೀನು ನನ್ನ ಮನೆಗೆ ಬಂದು ಊಟಮಾಡಿ ವಿಶ್ರಮಿಸಿಕೋ, ನಾನು ನಿನಗೆ ಬಹುಮಾನ ಕೊಡುವೆನು,” ಎಂದನು.</verse>
				<verse number="8">ಆದರೆ ದೇವರ ಮನುಷ್ಯನು ಅರಸನಿಗೆ ಉತ್ತರವಾಗಿ, “ನೀನು ನನಗೆ ನಿನ್ನ ಅರ್ಧ ಆಸ್ತಿಯನ್ನು ಕೊಟ್ಟರೂ, ನಾನು ನಿನ್ನ ಸಂಗಡ ಹೋಗುವುದಿಲ್ಲ. ಈ ಸ್ಥಳದಲ್ಲಿ ರೊಟ್ಟಿ ತಿನ್ನುವುದಿಲ್ಲ, ಕುಡಿಯುವುದಿಲ್ಲ.</verse>
				<verse number="9">ಏಕೆಂದರೆ, ‘ನೀನು ರೊಟ್ಟಿ ತಿನ್ನಬೇಡ, ನೀರನ್ನು ಕುಡಿಯಬೇಡ, ನೀನು ಬಂದ ಮಾರ್ಗದಿಂದ ಹಿಂದಿರುಗಿ ಹೋಗಬೇಡ,’ ಎಂದು ಯೆಹೋವ ದೇವರ ವಾಕ್ಯದಿಂದ ನನಗೆ ಆಜ್ಞೆಯಾಗಿದೆ,” ಎಂದನು.</verse>
				<verse number="10">ಆದ್ದರಿಂದ ಅವನು ಬೇತೇಲಿಗೆ ಬಂದ ಮಾರ್ಗದಿಂದ ಹಿಂದಿರುಗಿ ಹೋಗದೆ, ಮತ್ತೊಂದು ಮಾರ್ಗವಾಗಿ ಹೋದನು.</verse>
				<verse number="11">ಬೇತೇಲಿನಲ್ಲಿ ಒಬ್ಬ ವೃದ್ಧ ಪ್ರವಾದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದಿನದಲ್ಲಿ ಬೇತೇಲಿನಲ್ಲಿ ದೇವರ ಮನುಷ್ಯನು ಮಾಡಿದ ಸಮಸ್ತ ಕ್ರಿಯೆಗಳನ್ನು ಮತ್ತು ಅರಸನಿಗೆ ಹೇಳಿದ ಮಾತುಗಳನ್ನು ತಮ್ಮ ತಂದೆಗೆ ತಿಳಿಸಿದರು.</verse>
				<verse number="12">ಆಗ ಅವರ ತಂದೆ ಅವರಿಗೆ, “ಅವನು ಯಾವ ಮಾರ್ಗವಾಗಿ ಹೋದನು,” ಎಂದನು. ಯೆಹೂದದಿಂದ ಬಂದ ದೇವರ ಮನುಷ್ಯನು ಹೋದ ಮಾರ್ಗವನ್ನು ಅವನ ಮಕ್ಕಳಿಗೆ ತೋರಿಸಿದರು.</verse>
				<verse number="13">ಆದ್ದರಿಂದ ಅವನು ತನ್ನ ಮಕ್ಕಳಿಗೆ, “ಕತ್ತೆಗೆ ತಡಿ ಹಾಕಿರಿ,” ಎಂದನು. ಅವರು ಕತ್ತೆಗೆ ತಡಿ ಹಾಕಿದರು. ಅವನು ಅದರ ಮೇಲೆ ಏರಿ,</verse>
				<verse number="14">ದೇವರ ಮನುಷ್ಯನ ಹಿಂದೆ ಹೋಗಿ, ಅವನು ಏಲಾ ಮರದ ಕೆಳಗೆ ಕುಳಿತುಕೊಂಡಿರುವುದನ್ನು ಕಂಡನು. ಆಗ ಅವನು, “ನೀನು ಯೆಹೂದದಿಂದ ಬಂದ ದೇವರ ಮನುಷ್ಯನೋ?” ಎಂದನು. ಅದಕ್ಕವನು, “ನಾನೇ,” ಎಂದನು.</verse>
				<verse number="15">ಆಗ ವೃದ್ಧ ಪ್ರವಾದಿಯು ಅವನಿಗೆ, “ನೀನು ನನ್ನ ಮನೆಗೆ ಬಂದು ರೊಟ್ಟಿ ತಿನ್ನು,” ಎಂದನು.</verse>
				<verse number="16">ಅದಕ್ಕವನು, “ನಾನು ನಿನ್ನ ಸಂಗಡ ಹಿಂದಿರುಗಲೂ ಕೂಡದು, ಹೋಗಲೂ ಕೂಡದು. ಈ ಸ್ಥಳದಲ್ಲಿ ನಿನ್ನ ಸಂಗಡ ರೊಟ್ಟಿ ತಿನ್ನುವುದಿಲ್ಲ, ನೀರು ಕುಡಿಯುವುದಿಲ್ಲ.</verse>
				<verse number="17">ಏಕೆಂದರೆ, ‘ನೀನು ಅಲ್ಲಿ ರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ, ಬಂದ ಮಾರ್ಗದಿಂದ ತಿರುಗಿ ಹೋಗಬೇಡ,’ ಎಂದು ಯೆಹೋವ ದೇವರ ಮಾತಿನಿಂದ ನನಗೆ ಅಪ್ಪಣೆಯಾಗಿದೆ,” ಎಂದನು.</verse>
				<verse number="18">ಆಗ ವೃದ್ಧನು, “ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನ ಮುಖಾಂತರ ನನಗೆ ಯೆಹೋವ ದೇವರ ವಾಕ್ಯವು ಉಂಟಾಗಿ, ನಿನ್ನನ್ನು ಹಿಂದಕ್ಕೆ ಕರಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಆಜ್ಞೆಯಾಗಿದೆ ಎಂದು ಹೇಳಿದನು.” ಆದರೆ ವೃದ್ಧನು ಅವನಿಗೆ ಸುಳ್ಳು ಹೇಳಿದನು.</verse>
				<verse number="19">ಹಾಗೆಯೇ ದೇವರ ಮನುಷ್ಯನು ವೃದ್ಧನ ಸಂಗಡ ಹಿಂದಿರುಗಿ ಹೋಗಿ, ಅವನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನು.</verse>
				<verse number="20">ಅವರು ಊಟಕ್ಕೆ ಕುಳಿತಿರುವಾಗ, ಅವನನ್ನು ಹಿಂದಕ್ಕೆ ಕರೆತಂದ ವೃದ್ಧ ಪ್ರವಾದಿಗೆ ಯೆಹೋವ ದೇವರ ವಾಕ್ಯವು ಉಂಟಾಗಿ,</verse>
				<verse number="21">ಅವನು ಯೆಹೂದ ದೇಶದವನಾದ ಆ ದೇವರ ಮನುಷ್ಯನಿಗೆ, “ನೀನು ಯೆಹೋವ ದೇವರ ಮಾತಿಗೆ ತಿರುಗಿಬಿದ್ದು, ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಗೊಳ್ಳದೆ, ಹಿಂದಕ್ಕೆ ಬಂದು, ‘ರೊಟ್ಟಿ ತಿನ್ನಬೇಡ, ನೀರು ಕುಡಿಯಬೇಡ,’ ಎಂದು ಯೆಹೋವ ದೇವರು ನಿನಗೆ ಹೇಳಿದ ಸ್ಥಳದಲ್ಲಿ</verse>
				<verse number="22">ನೀನು ಹಿಂದಿರುಗಿ ಬಂದು, ನೀನು ರೊಟ್ಟಿ ತಿಂದು, ನೀರು ಕುಡಿದಿದ್ದರಿಂದ, ನಿನ್ನ ಹೆಣ ನಿನ್ನ ಪಿತೃಗಳ ಸಮಾಧಿಗೆ ಸೇರುವುದಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಹೇಳಿದನು.</verse>
				<verse number="23">ದೇವರ ಮನುಷ್ಯನು ರೊಟ್ಟಿ ತಿಂದು, ನೀರು ಕುಡಿದ ತುರುವಾಯ, ಅವನು ತಾನು ಕರೆದುತಂದ ಪ್ರವಾದಿಗೋಸ್ಕರ ಕತ್ತೆಗೆ ತಡಿ ಹಾಕಿದನು.</verse>
				<verse number="24">ಅವನು ಹೋದ ತರುವಾಯ, ಸಿಂಹವು ಅವನನ್ನು ದಾರಿಯಲ್ಲಿ ಹಿಡಿದು ಕೊಂದುಹಾಕಿತು. ಅವನ ಹೆಣ ದಾರಿಯಲ್ಲಿ ಬಿದ್ದಿತ್ತು. ಕತ್ತೆಯೂ ಮತ್ತು ಸಿಂಹವೂ ಹೆಣದ ಬಳಿಯಲ್ಲಿ ನಿಂತಿದ್ದವು.</verse>
				<verse number="25">ಆಗ ಮನುಷ್ಯರು ಹಾದು ಹೋಗಿ ಮಾರ್ಗದಲ್ಲಿ ಬಿದ್ದಿರುವ ಹೆಣವನ್ನೂ, ಹೆಣದ ಬಳಿಯಲ್ಲಿ ನಿಂತಿರುವ ಸಿಂಹವನ್ನೂ ಕಂಡು, ವೃದ್ಧ ಪ್ರವಾದಿಯು ವಾಸವಾಗಿರುವ ಪಟ್ಟಣಕ್ಕೆ ಬಂದು ತಿಳಿಸಿದರು.</verse>
				<verse number="26">ಅವನನ್ನು ಮಾರ್ಗದಿಂದ ಹಿಂದಕ್ಕೆ ಕರೆತಂದ ಪ್ರವಾದಿಯು ಆ ವರ್ತಮಾನವನ್ನು ಕೇಳಿ, “ಇವನೇ ಯೆಹೋವ ದೇವರ ಮಾತಿಗೆ ಅವಿಧೇಯನಾದ ದೇವರ ಮನುಷ್ಯನು, ಯೆಹೋವ ದೇವರು ಅವನನ್ನು ಸಿಂಹಕ್ಕೆ ಒಪ್ಪಿಸಿದ್ದಾರೆ, ಅದು ಅವನನ್ನು ಸೀಳಿ ಕೊಂದುಹಾಕಿತು,” ಎಂದನು.</verse>
				<verse number="27">ತನ್ನ ಮಕ್ಕಳಿಗೆ, “ಕತ್ತೆಗೆ ತಡಿ ಹಾಕಿರಿ,” ಎಂದನು. ಅವರು ತಡಿ ಹಾಕಿದರು.</verse>
				<verse number="28">ಅವನು ಹೋಗಿ ಇವನ ಹೆಣವು ದಾರಿಯಲ್ಲಿ ಬಿದ್ದಿರುವುದನ್ನೂ, ಕತ್ತೆಯೂ, ಸಿಂಹವೂ ಹೆಣದ ಬಳಿಯಲ್ಲಿ ನಿಂತಿರುವುದನ್ನೂ ಕಂಡನು.</verse>
				<verse number="29">ಸಿಂಹವು ಹೆಣವನ್ನು ತಿನ್ನದೆ, ಕತ್ತೆಯನ್ನು ಸೀಳಿ ಹಾಕದೆ ಇತ್ತು. ಆಗ ಪ್ರವಾದಿಯು ದೇವರ ಮನುಷ್ಯನ ಹೆಣವನ್ನು ಎತ್ತಿ, ಕತ್ತೆಯ ಮೇಲೆ ಹಾಕಿಕೊಂಡು ಗೋಳಾಡುವುದಕ್ಕೂ, ಅವನನ್ನು ಹೂಳುವುದಕ್ಕೂ ಪಟ್ಟಣಕ್ಕೆ ತಂದನು.</verse>
				<verse number="30">ಅವನ ಹೆಣವನ್ನು ತನ್ನ ಸಮಾಧಿಯಲ್ಲಿ ಹೂಳಿಟ್ಟನು. ಆಗ ಅವರು, “ಅಯ್ಯೋ, ನಮ್ಮ ಸಹೋದರನೇ!” ಎಂದು ಅವನಿಗೋಸ್ಕರ ಗೋಳಾಡಿದರು.</verse>
				<verse number="31">ವೃದ್ಧ ಪ್ರವಾದಿಯು ಅವನನ್ನು ಹೂಳಿಟ್ಟ ತರುವಾಯ, ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ ದೇವರ ಮನುಷ್ಯನನ್ನು ಹೂಳಿಟ್ಟ ಸಮಾಧಿಯಲ್ಲಿ ನನ್ನನ್ನು ಹೂಳಿಡಿರಿ. ನನ್ನ ಎಲುಬುಗಳನ್ನು ಅವನ ಎಲುಬುಗಳ ಬಳಿಯಲ್ಲಿ ಇಡಿರಿ.</verse>
				<verse number="32">ಏಕೆಂದರೆ ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ, ಸಮಾರ್ಯ ಪಟ್ಟಣಗಳಲ್ಲಿರುವ ಪೂಜಾಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ, ಯೆಹೋವ ದೇವರ ಮಾತಿನಿಂದ ಕೂಗಿದ ಮಾತು ನಿಶ್ಚಯವಾಗಿ ಆಗುವುದು,” ಎಂದನು.</verse>
				<verse number="33">ಈ ಕಾರ್ಯದ ತರುವಾಯ ಯಾರೊಬ್ಬಾಮನು ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗದೆ, ಪೂಜಾ ಸ್ಥಳಗಳಿಗೆ ಕನಿಷ್ಠ ಜನರಿಂದ ಪುನಃ ಯಾಜಕರನ್ನು ನೇಮಿಸಿದನು. ಯಾವನಿಗೆ ಮನಸ್ಸಿತ್ತೋ ಅವನನ್ನು ಇವನು ಪ್ರತಿಷ್ಠೆ ಮಾಡಿಸಿದ್ದರಿಂದ, ಪೂಜಾಸ್ಥಳಗಳ ಯಾಜಕರಲ್ಲಿ ಅವನು ಒಬ್ಬನಾಗುವನು.</verse>
				<verse number="34">ಯಾರೊಬ್ಬಾಮನ ಮನೆಯವರನ್ನು ಭೂಮಿಯಿಂದ ಸಂಹರಿಸುವುದಕ್ಕೂ, ನಾಶಮಾಡುವುದಕ್ಕೂ ಈ ಪಾಪವು ಅವರಿಗೆ ಕಾರಣವಾಯಿತು.</verse>
			</chapter>
			<chapter number="14">
				<verse number="1">ಅದೇ ಕಾಲದಲ್ಲಿ ಯಾರೊಬ್ಬಾಮನ ಮಗ ಅಬೀಯನಿಗೆ ರೋಗ ತಗುಲಿತು. ಆದ್ದರಿಂದ ಯಾರೊಬ್ಬಾಮನು ತನ್ನ ಪತ್ನಿಗೆ,</verse>
				<verse number="2">“ನೀನು ಯಾರೊಬ್ಬಾಮನ ಪತ್ನಿ ಎಂದು ಯಾರೂ ತಿಳಿಯದ ಹಾಗೆ ನೀನೆದ್ದು, ವೇಷಹಾಕಿಕೊಂಡು ಶೀಲೋವಿಗೆ ಹೋಗು. ‘ಈ ಜನರ ಮೇಲೆ ಅರಸನಾಗಿರುವೆ,’ ಎಂದು ನನಗೆ ಹೇಳಿದ ಪ್ರವಾದಿ ಅಹೀಯನು ಅಲ್ಲಿದ್ದಾನೆ.</verse>
				<verse number="3">ಇದಲ್ಲದೆ ನೀನು ನಿನ್ನ ಕೈಯಲ್ಲಿ ಹತ್ತು ರೊಟ್ಟಿಗಳನ್ನೂ, ಭಕ್ಷ್ಯಗಳನ್ನೂ, ಒಂದು ಮಡಕೆ ಜೇನುತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಅವನು ಮಗುವಿಗೆ ಆಗುವುದನ್ನು ನಿನಗೆ ತಿಳಿಸುವನು,” ಎಂದನು.</verse>
				<verse number="4">ಯಾರೊಬ್ಬಾಮನ ಪತ್ನಿಯು ಹಾಗೆಯೇ ಮಾಡಿ, ಎದ್ದು ಶೀಲೋವಿಗೆ ಹೋಗಿ, ಅಹೀಯನ ಮನೆಗೆ ಬಂದಳು. ಆದರೆ ಅಹೀಯನಿಗೆ ಕಾಣಿಸಲಿಲ್ಲ, ವೃದ್ದಾಪ್ಯದಿಂದ ಅವನ ಕಣ್ಣುಗಳು ಮೊಬ್ಬಾಗಿ ಹೋಗಿದ್ದವು.</verse>
				<verse number="5">ಆದರೆ ಯೆಹೋವ ದೇವರು ಅಹೀಯನಿಗೆ, “ಯಾರೊಬ್ಬಾಮನ ಪತ್ನಿಯು ತನ್ನ ಮಗನಿಗೋಸ್ಕರ ನಿನ್ನಿಂದ ದೈವೋತ್ತರವನ್ನು ಕೇಳುವುದಕ್ಕೆ ಬರುತ್ತಾಳೆ. ಏಕೆಂದರೆ ಅವಳ ಮಗನು ರೋಗದಲ್ಲಿದ್ದಾನೆ. ನೀನು ಅವಳಿಗೆ ಹೀಗೀಗೆ ಹೇಳು, ಅವಳು ಒಳಗೆ ಬರುವಾಗ ಮತ್ತೊಬ್ಬಳ ಹಾಗೆ ವೇಷಹಾಕಿಕೊಂಡು ಬರುವಳು,” ಎಂದು ಹೇಳಿಕೊಟ್ಟಿದ್ದನು.</verse>
				<verse number="6">ಅನಂತರ ಅವಳು ಬಾಗಿಲಲ್ಲಿ ಪ್ರವೇಶಿಸುವಾಗ, ಅಹೀಯನು ಅವಳ ಹೆಜ್ಜೆಗಳ ಶಬ್ದ ಕೇಳುತ್ತಲೇ ಅವನು, “ಯಾರೊಬ್ಬಾಮನ ಪತ್ನಿಯೇ ಒಳಗೆ ಬಾ, ನೀನು ಮತ್ತೊಬ್ಬಳಂತೆ ತೋರಿಸಿಕೊಳ್ಳುವುದು ಏಕೆ? ನಾನು ಕಠಿಣವಾದವುಗಳನ್ನು ತಿಳಿಸಲು ನನಗೆ ಅಪ್ಪಣೆಯಾಗಿದೆ.</verse>
				<verse number="7">ನೀನು ಹೋಗಿ ಯಾರೊಬ್ಬಾಮನಿಗೆ ಹೇಳಬೇಕಾದದ್ದು, ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಾನು ಜನರೊಳಗಿಂದ ತೆಗೆದು ನಿನ್ನನ್ನು ಹೆಚ್ಚಿಸಿ, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿ ಮಾಡಿದೆನು.</verse>
				<verse number="8">ದಾವೀದನ ಮನೆಯಿಂದ ರಾಜ್ಯವನ್ನು ವಿಭಾಗಿಸಿ ನಿನಗೆ ಕೊಟ್ಟೆನು. ಆದರೆ ನನ್ನ ಆಜ್ಞೆಗಳನ್ನು ಕೈಗೊಂಡು, ನನ್ನ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿ, ತನ್ನ ಸಂಪೂರ್ಣ ಹೃದಯದಿಂದ ನನ್ನನ್ನು ಹಿಂಬಾಲಿಸಿದ ನನ್ನ ಸೇವಕನಾದ ದಾವೀದನ ಹಾಗೆ ನೀನು ಇರಲಿಲ್ಲ.</verse>
				<verse number="9">ನೀನು ನಿನಗೆ ಮುಂಚೆ ಇದ್ದವರೆಲ್ಲರಿಗಿಂತ ಕೆಟ್ಟದ್ದನ್ನು ಮಾಡಿದೆ. ಏಕೆಂದರೆ, ನೀನು ಹೋಗಿ ನನಗೆ ಕೋಪವನ್ನೆಬ್ಬಿಸುವ ಅನ್ಯದೇವರುಗಳನ್ನೂ, ಎರಕದ ವಿಗ್ರಹಗಳನ್ನೂ ಮಾಡಿಕೊಂಡು, ನನ್ನನ್ನು ತಿರಸ್ಕರಿಸಿದೆ.</verse>
				<verse number="10">“ ‘ಆದ್ದರಿಂದ ನಾನು ಯಾರೊಬ್ಬಾಮನ ಮನೆಯ ಮೇಲೆ ಕೇಡನ್ನು ಬರಮಾಡಿ, ಯಾರೊಬ್ಬಾಮನ ಕಡೆಯಿಂದ ಸಮಸ್ತ ಗಂಡಸರನ್ನೂ, ಇಸ್ರಾಯೇಲಿನಲ್ಲಿ ಉಳಿದು ಬಚ್ಚಿಟ್ಟುಕೊಂಡವರನ್ನೂ ಕಡಿದುಬಿಟ್ಟು, ಅದು ತೀರುವವರೆಗೆ ಮನುಷ್ಯನು ರಸವನ್ನು ಹೇಗೆ ತೆಗೆದು ಹಾಕುತ್ತಾನೋ, ಹಾಗೆಯೇ ನಾನು ಯಾರೊಬ್ಬಾಮನ ಮನೆಯ ಉಳುವಿಕೆಯನ್ನು ತೆಗೆದುಹಾಕುತ್ತೇನೆ.</verse>
				<verse number="11">ಯಾರೊಬ್ಬಾಮನವರಲ್ಲಿ ಯಾವನು ಪಟ್ಟಣದಲ್ಲಿ ಸಾಯುವನೋ ಅವನನ್ನು ನಾಯಿಗಳು ತಿಂದುಬಿಡುವವು. ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿಂದುಬಿಡುವವು,’ ಎಂದು ಯೆಹೋವ ದೇವರು ಹೇಳಿದ್ದಾರೆ.</verse>
				<verse number="12">“ಆದ್ದರಿಂದ ನೀನೆದ್ದು ನಿನ್ನ ಮನೆಗೆ ಹೋಗು. ಪಟ್ಟಣದಲ್ಲಿ ಪ್ರವೇಶಿಸುವಾಗ ನಿನ್ನ ಮಗನು ಸಾಯುವನು.</verse>
				<verse number="13">ಇದಲ್ಲದೆ ಸಮಸ್ತ ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ ಅವನನ್ನು ಹೂಳಿಡುವರು. ಏಕೆಂದರೆ, ಯಾರೊಬ್ಬಾಮನವರಲ್ಲಿ ಅವನೊಬ್ಬನೇ ಸಮಾಧಿಗೆ ಸೇರುವನು. ಯಾರೊಬ್ಬಾಮನ ಮನೆಯವರೊಳಗೆ ಅವನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗಾದ ಒಳ್ಳೆಯ ಕ್ರಿಯೆ ಸಿಕ್ಕಿತು.</verse>
				<verse number="14">“ಇದಲ್ಲದೆ ಯೆಹೋವ ದೇವರು ಇಸ್ರಾಯೇಲನ್ನು ಆಳುವುದಕ್ಕೆ ಅದೇ ದಿನದಲ್ಲಿ ಯಾರೊಬ್ಬಾಮನ ಮನೆಯನ್ನು ಕಡಿದುಬಿಡುವ ಒಬ್ಬ ಅರಸನನ್ನು ತನಗೋಸ್ಕರ ಎಬ್ಬಿಸುವರು.</verse>
				<verse number="15">ಈಗಲೇ ಏನು ಆಗುವುದು? ನೀರಿನಲ್ಲಿರುವ ಆಪು ಹುಲ್ಲು ಅಲ್ಲಾಡುವ ಹಾಗೆ ಯೆಹೋವ ದೇವರು ಇಸ್ರಾಯೇಲನ್ನು ಹೊಡೆಯುವರು. ಇಸ್ರಾಯೇಲರು ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಲು, ತಮ್ಮ ವಿಗ್ರಹಾರಾಧನೆಗೋಸ್ಕರ ಅಶೇರ ಸ್ತಂಭಗಳನ್ನು ನಿಲ್ಲಿಸಿಕೊಂಡದ್ದರಿಂದ, ಯೆಹೋವ ದೇವರು ಅವರ ತಂದೆಗಳಿಗೆ ಕೊಟ್ಟ ಈ ಉತ್ತಮ ದೇಶದಲ್ಲಿಂದ ಅವರನ್ನು ನಿರ್ಮೂಲ ಮಾಡಿ, ಯೂಫ್ರೇಟೀಸ್ ನದಿಯ ಆಚೆಯಲ್ಲಿ ಅವರನ್ನು ಚದರುವಂತೆ ಮಾಡುವರು.</verse>
				<verse number="16">ಯೆಹೋವ ದೇವರು ಯಾರೊಬ್ಬಾಮನ ಪಾಪಗಳ ನಿಮಿತ್ತ ಇಸ್ರಾಯೇಲರನ್ನು ಶತ್ರುಗಳಿಗೆ ಒಪ್ಪಿಸಿಬಿಡುವರು. ಏಕೆಂದರೆ ಯಾರೊಬ್ಬಾಮನೇ ಪಾಪಮಾಡಿ, ಪಾಪವನ್ನು ಮಾಡಲು ಇಸ್ರಾಯೇಲರನ್ನು ಪ್ರೇರೇಪಿಸಿದನು,” ಎಂದನು.</verse>
				<verse number="17">ಆಗ ಯಾರೊಬ್ಬಾಮನ ಪತ್ನಿ ಎದ್ದು ಹೊರಟು ತಿರ್ಚಕ್ಕೆ ಬಂದಳು. ಯೆಹೋವ ದೇವರು ಪ್ರವಾದಿಯಾದ ತನ್ನ ಸೇವಕನಾಗಿರುವ ಅಹೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಅವಳು ಬಾಗಿಲ ಹೊಸ್ತಿಲ ಬಳಿಗೆ ಬಂದಾಗ ಅವಳ ಮಗನು ಸತ್ತನು.</verse>
				<verse number="18">ಯೆಹೋವ ದೇವರು ಪ್ರವಾದಿಯಾದ ಅಹೀಯನ ಮುಖಾಂತರವಾಗಿ ತಿಳಿಸಿದ ಪ್ರಕಾರ ಅವರು ಅವನನ್ನು ಹೂಳಿಟ್ಟರು. ಇಸ್ರಾಯೇಲರೆಲ್ಲರು ಅವನಿಗೋಸ್ಕರ ಗೋಳಾಡಿದರು.</verse>
				<verse number="19">ಯಾರೊಬ್ಬಾಮನ ಮಿಕ್ಕಾದ ಕ್ರಿಯೆಗಳೂ, ಅವನು ಯುದ್ಧ ಮಾಡಿದ್ದೂ, ಆಳಿದ್ದೂ, ಇವು ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="20">ಯಾರೊಬ್ಬಾಮನು ಆಳಿದ ದಿವಸಗಳು ಇಪ್ಪತ್ತೆರಡು ವರ್ಷಗಳಾಗಿದ್ದವು. ಅವನು ಮೃತನಾಗಿ, ತನ್ನ ಪಿತೃಗಳ ಜೊತೆ ಸೇರಿದನು. ಅವನಿಗೆ ಬದಲಾಗಿ ಅವನ ಮಗ ನಾದಾಬನು ಅರಸನಾದನು.</verse>
				<verse number="21">ಆದರೆ ಸೊಲೊಮೋನನ ಮಗ ರೆಹಬ್ಬಾಮನು ಯೆಹೂದದಲ್ಲಿ ಆಳುತ್ತಾ ಇದ್ದನು. ರೆಹಬ್ಬಾಮನು ಆಳಲು ಆರಂಭಿಸಿದಾಗ, ನಲವತ್ತೊಂದು ವರ್ಷದವನಾಗಿದ್ದು, ಅಲ್ಲಿ ಯೆಹೋವ ದೇವರು ತಮ್ಮ ಹೆಸರಿಗೋಸ್ಕರ ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ಅವನ ತಾಯಿಯ ಹೆಸರು ನಯಮಾ.</verse>
				<verse number="22">ಆದರೆ ಯೆಹೂದದವರು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟತನ ಮಾಡಿ, ತಮ್ಮ ಪಿತೃಗಳು ಮಾಡಿದ ಸಮಸ್ತ ಪಾಪಗಳಿಗಿಂತ, ತಾವು ಹೆಚ್ಚಾಗಿ ಪಾಪಮಾಡಿ ಯೆಹೋವ ದೇವರಿಗೆ ರೋಷವನ್ನೆಬ್ಬಿಸಿದರು.</verse>
				<verse number="23">ಅವರು ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ, ಉನ್ನತ ಸ್ಥಳಗಳನ್ನೂ ಎತ್ತರವಾದ ಪ್ರತಿ ಗುಡ್ಡದ ಮೇಲೆಯೂ, ಹಸುರಾದ ಪ್ರತಿ ಗಿಡದ ಕೆಳಗೂ ತಮಗಾಗಿ ಮಾಡಿಕೊಂಡರು.</verse>
				<verse number="24">ಇದಲ್ಲದೆ ಪೂಜಾಸ್ಥಳಗಳಲ್ಲಿ ಪುರುಷಗಾಮಿಗಳಿದ್ದರು. ಅವರು ಇಸ್ರಾಯೇಲರ ಮುಂದೆ ಯೆಹೋವ ದೇವರು ಹೊರಡಿಸಿದ ಜನಾಂಗಗಳ ಸಕಲ ಅಸಹ್ಯ ಕಾರ್ಯಗಳನ್ನು ಮಾಡುತ್ತಾ ಇದ್ದರು.</verse>
				<verse number="25">ರೆಹಬ್ಬಾಮನು ಅರಸನಾದ ಐದನೆಯ ವರ್ಷದಲ್ಲಿ, ಈಜಿಪ್ಟ್ ಅರಸನಾದ ಶೀಶಕನು ಯೆರೂಸಲೇಮಿನ ಮೇಲೆ ದಾಳಿಮಾಡಿದನು.</verse>
				<verse number="26">ಅವನು ಯೆಹೋವ ದೇವರ ಆಲಯ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ದೋಚಿಕೊಂಡನು, ಇದಲ್ಲದೆ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ಒಳಗೊಂಡಂತೆ ಅವನು ಸಮಸ್ತವನ್ನೂ ದೋಚಿಕೊಂಡು ಹೋದನು.</verse>
				<verse number="27">ಆದಕಾರಣ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ಪ್ರವೇಶದ್ವಾರದ ಕರ್ತವ್ಯದಲ್ಲಿದ್ದ ಕಾವಲುಗಾರರ ಅಧಿಪತಿಗಳ ಕೈಯಲ್ಲಿ ಒಪ್ಪಿಸಿದನು.</verse>
				<verse number="28">ಅರಸನು ಯೆಹೋವ ದೇವರ ಆಲಯಕ್ಕೆ ಹೋಗುವಾಗಲೆಲ್ಲಾ, ಕಾವಲುಗಾರರು ಅವುಗಳನ್ನು ಎತ್ತಿಕೊಂಡು ಬರುತ್ತಿದ್ದರು. ಅಲ್ಲಿಂದ ಹಿಂದಕ್ಕೆ ಬಂದ ನಂತರ ಕಾವಲಿನ ಚಾವಡಿಗೆ ತರುತ್ತಿದ್ದರು.</verse>
				<verse number="29">ರೆಹಬ್ಬಾಮನ ಉಳಿದ ಕಾರ್ಯಗಳೂ, ಅವನು ಮಾಡಿದ ಸಮಸ್ತವೂ ಯೆಹೂದ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="30">ಇದಲ್ಲದೆ ರೆಹಬ್ಬಾಮನಿಗೂ, ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧಗಳಾಗುತ್ತಿದ್ದವು.</verse>
				<verse number="31">ರೆಹಬ್ಬಾಮನು ಮೃತನಾಗಿ ತನ್ನ ಪಿತೃಗಳ ಬಳಿ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸಮಾಧಿ ಬಳಿ ಸಮಾಧಿಮಾಡಿದರು. ಅವನ ತಾಯಿ ಅಮ್ಮೋನಿಯಳಾದ ನಯಮಾ. ಅವನ ಮಗ ಅಬಿಯಾಮನು ಅವನಿಗೆ ಬದಲಾಗಿ ಅರಸನಾದನು.</verse>
			</chapter>
			<chapter number="15">
				<verse number="1">ನೆಬಾಟನ ಮಗ ಯಾರೊಬ್ಬಾಮನ ಹದಿನೆಂಟನೆಯ ವರ್ಷದಲ್ಲಿ ಅಬಿಯಾಮನು ಯೆಹೂದದ ಅರಸನಾಗಿ,</verse>
				<verse number="2">ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು. ಅವನ ತಾಯಿಯ ಹೆಸರು ಮಾಕಾ, ಇವಳು ಅಬ್ಷಾಲೋಮನ ಮಗಳಾಗಿದ್ದಳು.</verse>
				<verse number="3">ಅಬಿಯಾಮನು, ತನ್ನ ಪಿತೃವಾದ ದಾವೀದನ ಹೃದಯದ ಪ್ರಕಾರ, ಅವನ ಹೃದಯವು ತನ್ನ ದೇವರಾದ ಯೆಹೋವ ದೇವರ ಮುಂದೆ ಪೂರ್ಣವಾಗಿರದೆ, ತನಗೆ ಮುಂಚೆ ಇದ್ದ ತನ್ನ ತಂದೆ ಮಾಡಿದ ಸಮಸ್ತ ಪಾಪಗಳಲ್ಲಿ ನಡೆದನು.</verse>
				<verse number="4">ಅವನ ತರುವಾಯ ಅವನ ಮಗನನ್ನು ನೇಮಿಸುವುದಕ್ಕೂ, ಯೆರೂಸಲೇಮನ್ನು ಸ್ಥಿರಪಡಿಸುವುದಕ್ಕೂ, ತನ್ನ ದೇವರಾದ ಯೆಹೋವ ದೇವರು ದಾವೀದನ ನಿಮಿತ್ತ ಯೆರೂಸಲೇಮಿನಲ್ಲಿ ಅವನಿಗೆ ದೀಪವನ್ನು ಉಳಿಸಿದರು.</verse>
				<verse number="5">ಏಕೆಂದರೆ ದಾವೀದನು ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟು, ತನ್ನ ಜೀವಿತದ ಸಮಸ್ತ ದಿವಸಗಳಲ್ಲಿ ಯೆಹೋವ ದೇವರು ತನಗೆ ಆಜ್ಞಾಪಿಸಿದ ಎಲ್ಲಾದಕ್ಕೆ ತೊಲಗದೆ, ಅವರ ದೃಷ್ಟಿಗೆ ಮೆಚ್ಚಿಕೆಯಾದದ್ದನ್ನು ಮಾಡಿದನು.</verse>
				<verse number="6">ಆದರೆ ರೆಹಬ್ಬಾಮನಿಗೂ, ಯಾರೊಬ್ಬಾಮನಿಗೂ ಅವರ ಜೀವಾಂತ್ಯದವರೆಗೆ ಯುದ್ಧ ಉಂಟಾಗಿತ್ತು.</verse>
				<verse number="7">ಅಬಿಯಾಮನ ಮಿಕ್ಕಾದ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ, ಯೆಹೂದದ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.</verse>
				<verse number="8">ಅಬಿಯಾಮನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು, ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಆಸನು ಅವನಿಗೆ ಬದಲಾಗಿ ಅರಸನಾದನು.</verse>
				<verse number="9">ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನ ಇಪ್ಪತ್ತನೆಯ ವರುಷದಲ್ಲಿ ಆಸನು ಯೆಹೂದದ ಮೇಲೆ ಅರಸನಾದನು.</verse>
				<verse number="10">ನಾಲ್ವತ್ತೊಂದು ವರುಷ ಅವನು ಯೆರೂಸಲೇಮಿನಲ್ಲಿ ಆಳಿದನು. ಅವನ ಅಜ್ಜಿ ಅಬ್ಷಾಲೋಮನ ಮಗಳಾಗಿದ್ದು ಮಾಕಾ ಎಂಬಾಕೆಯು ಇವನ ತಾಯಿ.</verse>
				<verse number="11">ಆಸನು ತನ್ನ ತಂದೆಯಾದ ದಾವೀದನ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದನ್ನು ಮಾಡಿದನು.</verse>
				<verse number="12">ಅವನು ಪೂಜಾ ಸ್ಥಳದ ಪುರುಷಗಾಮಿಗಳನ್ನು ದೇಶದಲ್ಲಿಂದ ಹೊರಡಿಸಿ, ತನ್ನ ಪಿತೃಗಳು ಮಾಡಿದ ಸಮಸ್ತ ವಿಗ್ರಹಗಳನ್ನು ತೆಗೆದುಹಾಕಿದನು.</verse>
				<verse number="13">ಇದಲ್ಲದೆ, ಆಸನು ತನ್ನ ಅಜ್ಜಿ ಮಾಕ ಎಂಬವಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ, ಅವಳನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಆ ಮೂರ್ತಿಯನ್ನು ಕಡಿದುಹಾಕಿ ಕಿದ್ರೋನ್ ಹಳ್ಳದ ಹತ್ತಿರ ಸುಟ್ಟುಬಿಟ್ಟನು.</verse>
				<verse number="14">ಅವನು ಪೂಜಾಸ್ಥಳಗಳನ್ನು ತೆಗೆದು ಹಾಕದಿದ್ದರೂ ಆಸನ ಹೃದಯವು ತನ್ನ ಜೀವಮಾನದಲ್ಲೆಲ್ಲಾ ಯೆಹೋವ ದೇವರ ದೃಷ್ಟಿಯಲ್ಲಿ ದೋಷವಿಲ್ಲದ್ದಾಗಿತ್ತು.</verse>
				<verse number="15">ತಾನು ಮತ್ತು ತನ್ನ ತಂದೆಯೂ ಪ್ರತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಸಲಕರಣೆಗಳನ್ನೂ ಯೆಹೋವ ದೇವರ ಆಲಯಕ್ಕೆ ತಂದನು.</verse>
				<verse number="16">ಇದಲ್ಲದೆ ಆಸನಿಗೂ ಇಸ್ರಾಯೇಲಿನ ಅರಸನಾದ ಬಾಷನಿಗೂ, ಅವರ ಜೀವಾಂತ್ಯದವರೆಗೂ ಯುದ್ಧ ನಡೆಯುತ್ತಿತ್ತು.</verse>
				<verse number="17">ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲೀ, ಹೊರಗಾಗಲೀ ಯಾರೂ ಹೋಗದ ಹಾಗೆ ಸುತ್ತಲೂ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು.</verse>
				<verse number="18">ಆಸನು ಯೆಹೋವ ದೇವರ ಆಲಯದ ಮತ್ತು ತನ್ನ ಅರಮನೆಯ ಬೊಕ್ಕಸಗಳಿಂದ ಮಿಕ್ಕ ಸಮಸ್ತ ಬೆಳ್ಳಿಬಂಗಾರವನ್ನು ತೆಗೆದು, ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ, ದಮಸ್ಕದಲ್ಲಿ ವಾಸವಾಗಿರುವ ಹೆಜ್ಯೋನನ ಮಗನೂ, ಟಬ್ರಿಮ್ಮೋನನ ಮಗನೂ ಆದ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿದನು.</verse>
				<verse number="19">ಅಲ್ಲದೆ ಅವನಿಗೆ, “ನನ್ನ ತಂದೆ ಮತ್ತು ನಿನ್ನ ತಂದೆಯ ನಡುವೆ ಇದ್ದಂತೆ ನನ್ನ ಮತ್ತು ನಿನ್ನ ನಡುವೆ ಒಡಂಬಡಿಕೆ ಉಂಟು. ಇಗೋ ನಾನು ಬೆಳ್ಳಿಬಂಗಾರವನ್ನು ದಾನವಾಗಿ ನಿನಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ, ನೀನು ಅವನ ಸಂಗಡ ಮಾಡಿದ ಒಡಂಬಡಿಕೆಯನ್ನು ಮುರಿಯಬೇಕು,” ಎಂದನು.</verse>
				<verse number="20">ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನ್ನ ಸೈನ್ಯಾಧಿಪತಿಗಳನ್ನು ಕಳುಹಿಸಿದನು. ಇಯ್ಯೋನ್, ದಾನ್, ಆಬೇಲ್ ಬೇತ್ ಮಾಕಾ ಹಾಗೂ ಸಮಸ್ತ ಕಿನ್ನೆರೆತ್, ಸಮಸ್ತ ನಫ್ತಾಲಿ ಪ್ರಾಂತ ಇವುಗಳನ್ನು ಹಾಳುಮಾಡಿದರು.</verse>
				<verse number="21">ಬಾಷನು ಇದನ್ನು ಕೇಳಿದಾಗ ರಾಮಕೋಟೆ ಕಟ್ಟಿಸುವುದನ್ನು ಬಿಟ್ಟು, ತಿರ್ಚಕ್ಕೆ ಹೋಗಿ ವಾಸಿಸಿದನು.</verse>
				<verse number="22">ಆಗ ಅರಸನಾದ ಆಸನು ಯೆಹೂದರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಯಿಸಿ, ಬಾಷನು ಕಟ್ಟಿಸುತ್ತಾ ಇದ್ದ ರಾಮ ಪಟ್ಟಣದ ಕಲ್ಲುಗಳನ್ನೂ, ಅದರ ತೊಲೆಗಳನ್ನೂ ತೆಗೆದುಕೊಂಡುಹೋಗಿ ಅವುಗಳಿಂದ ಬೆನ್ಯಾಮೀನನ ಗಿಬೆಯ ಮತ್ತು ಮಿಚ್ಪೆ ಎಂಬ ನಗರಗಳನ್ನು ಕಟ್ಟಿಸಿದನು.</verse>
				<verse number="23">ಆಸನ ಉಳಿದ ಎಲ್ಲಾ ಕಾರ್ಯಗಳೂ, ಅವನ ಸಮಸ್ತ ಪರಾಕ್ರಮವೂ, ಅವನು ಮಾಡಿದ್ದೆಲ್ಲವೂ, ಅವನು ಕಟ್ಟಿಸಿದ ಪಟ್ಟಣಗಳೂ, ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಆದರೆ ತನ್ನ ವೃದ್ಧಾಪ್ಯದಲ್ಲಿ ಅವನ ಕಾಲುಗಳಿಗೆ ರೋಗ ತಗುಲಿತು.</verse>
				<verse number="24">ಆಸನು ಮೃತನಾಗಿ ತನ್ನ ಪಿತೃಗಳ ಬಳಿ ಸೇರಿದನು. ತನ್ನ ತಂದೆ ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸಮಾಧಿ ಬಳಿ ಅವನನ್ನು ಹೂಳಿಟ್ಟರು. ಅವನಿಗೆ ಬದಲಾಗಿ ಅವನ ಮಗ ಯೆಹೋಷಾಫಾಟನು ಅರಸನಾದನು.</verse>
				<verse number="25">ಯೆಹೂದದ ಅರಸನಾದ ಆಸನ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗ ನಾದಾಬನು ಅರಸನಾಗಿ ಎರಡು ವರುಷ ಇಸ್ರಾಯೇಲಿನ ಮೇಲೆ ಆಳಿದನು.</verse>
				<verse number="26">ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಪಾಪಮಾಡಲು ಇಸ್ರಾಯೇಲನ್ನು ಪ್ರೇರೇಪಿಸಿದ ಅವನ ತಂದೆಯ ಪಾಪದಲ್ಲಿಯೂ, ಅವನ ಮಾರ್ಗದಲ್ಲಿಯೂ ನಡೆದನು.</verse>
				<verse number="27">ನಾದಾಬನೂ, ಸಮಸ್ತ ಇಸ್ರಾಯೇಲರೂ ಫಿಲಿಷ್ಟಿಯರ ಪಟ್ಟಣವಾದ ಗಿಬ್ಬೆತೋನಿಗೆ ಮುತ್ತಿಗೆ ಹಾಕುತ್ತಾ ಇದ್ದರು. ಆದುದರಿಂದ ಇಸ್ಸಾಕಾರನ ಗೋತ್ರದ ಅಹೀಯನ ಮಗ ಬಾಷನು ನಾದಾಬನಿಗೆ ವಿರೋಧವಾಗಿ ಒಳಸಂಚುಮಾಡಿ, ನಾದಾಬನನ್ನು ಕೊಂದುಬಿಟ್ಟನು.</verse>
				<verse number="28">ಯೆಹೂದದ ಅರಸನಾದ ಆಸನ ಮೂರನೆಯ ವರುಷದಲ್ಲಿ ಬಾಷನು ನಾದಾಬನನ್ನು ಕೊಂದುಹಾಕಿ, ಅವನಿಗೆ ಬದಲಾಗಿ ಅರಸನಾದನು.</verse>
				<verse number="29">ಅವನು ಆಳುತ್ತಿರುವಾಗ, ಯಾರೊಬ್ಬಾಮನ ಮನೆಯವರನ್ನೆಲ್ಲಾ ಸಂಹರಿಸಿಬಿಟ್ಟನು. ಯಾರೊಬ್ಬಾಮನು ಪಾಪಮಾಡಿ, ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನಿಮಿತ್ತವಾಗಿಯೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿದ ನಿಮಿತ್ತವಾಗಿಯೂ, ಯೆಹೋವ ದೇವರು ಶೀಲೋವಿನವನಾಗಿರುವ ತನ್ನ ಸೇವಕನಾದ ಅಹೀಯನ ಮುಖಾಂತರ ಹೇಳಿದ ಮಾತಿನ ಪ್ರಕಾರವೇ ನೆರವೇರಿತು.</verse>
				<verse number="30">ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪವನ್ನು ಪ್ರಚೋದಿಸಿದ ಕಾರಣ ಇದು ಸಂಭವಿಸಿತು.</verse>
				<verse number="31">ನಾದಾಬನ ಮಿಕ್ಕಾದ ಕ್ರಿಯೆಗಳೂ, ಅವನು ಮಾಡಿದ ಸಮಸ್ತವೂ, ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="32">ಇದಲ್ಲದೆ ಆಸನಿಗೂ, ಇಸ್ರಾಯೇಲಿನ ಅರಸನಾದ ಬಾಷನಿಗೂ ಅವರ ಜೀವಾಂತ್ಯದವರೆಗೂ ಯುದ್ಧ ನಡೆಯುತ್ತಿತ್ತು.</verse>
				<verse number="33">ಯೆಹೂದದ ಅರಸನಾದ ಆಸನ ಮೂರನೆಯ ವರ್ಷದಲ್ಲಿ ಅಹೀಯನ ಮಗ ಬಾಷನು ಸಮಸ್ತ ಇಸ್ರಾಯೇಲಿನ ಮೇಲೆ ತಿರ್ಚದಲ್ಲಿ ಇಪ್ಪತ್ತನಾಲ್ಕು ವರ್ಷ ಆಳಿದನು.</verse>
				<verse number="34">ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಯಾರೊಬ್ಬಾಮನ ಮಾರ್ಗದಲ್ಲಿಯೂ, ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದಲ್ಲಿಯೂ ಭಾಗಿಯಾದನು.</verse>
			</chapter>
			<chapter number="16">
				<verse number="1">ಬಾಷನಿಗೆ ವಿರೋಧವಾಗಿ ಹನಾನೀಯ ಮಗ ಯೇಹುವಿಗೆ ಯೆಹೋವ ದೇವರ ವಾಕ್ಯ ಬಂತು,</verse>
				<verse number="2">“ನಾನು ನಿನ್ನನ್ನು ಧೂಳಿನಿಂದ ಎಬ್ಬಿಸಿ, ನಿನ್ನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿ ಇರಿಸಿದೆನು. ಆದರೆ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು, ನನ್ನ ಜನರಾದ ಇಸ್ರಾಯೇಲರು ತಮ್ಮ ಪಾಪಗಳಿಂದ ನನಗೆ ಕೋಪವನ್ನು ಎಬ್ಬಿಸುವ ಹಾಗೆ ಅವರನ್ನು ಪಾಪಮಾಡಲು ಪ್ರೇರೇಪಿಸಿದೆ.</verse>
				<verse number="3">ನಾನು ಬಾಷನ ಸಂತತಿಯನ್ನೂ, ಅವನ ಮನೆಯ ಸಂತತಿಯನ್ನೂ ತೆಗೆದುಹಾಕಿ, ನಿನ್ನ ಮನೆಯನ್ನು ನೆಬಾಟನ ಮಗ ಯಾರೊಬ್ಬಾಮನ ಮನೆಯ ಹಾಗೆ ಮಾಡುವೆನು.</verse>
				<verse number="4">ಬಾಷನ ಕಡೆಯವರಲ್ಲಿ ಪಟ್ಟಣದೊಳಗೆ ಸಾಯುವವನನ್ನು ನಾಯಿಗಳು ತಿನ್ನುವುವು. ಅವನ ಕಡೆಯವನಲ್ಲಿ ಹೊಲದೊಳಗೆ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವುವು,” ಎಂಬುದೇ ಆ ವಾಕ್ಯ.</verse>
				<verse number="5">ಬಾಷನ ಇತರ ಕಾರ್ಯಗಳೂ, ಅವನು ಮಾಡಿದ್ದೂ, ಅವನ ಪರಾಕ್ರಮವೂ ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="6">ಬಾಷನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ತಿರ್ಚದಲ್ಲಿ ಅವನ ಶವವನ್ನು ಸಮಾಧಿಮಾಡಿದರು. ಅವನ ಮಗ ಏಲನು ಅವನಿಗೆ ಬದಲಾಗಿ ಅರಸನಾದನು.</verse>
				<verse number="7">ಬಾಷನು ಯಾರೊಬ್ಬಾಮನ ಮನೆಯವರ ಹಾಗಿದ್ದು, ಅವರನ್ನು ಸಂಹರಿಸಿದ್ದರಿಂದ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿ, ಯೆಹೋವ ದೇವರ ಸಮ್ಮುಖದಲ್ಲಿ ತಾನು ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ಅವನಿಗೆ ವಿರೋಧವಾಗಿಯೂ, ಅವನ ಮನೆಗೆ ವಿರೋಧವಾಗಿಯೂ ಹನಾನೀಯ ಮಗನಾಗಿರುವ ಪ್ರವಾದಿ ಯೇಹುವಿನ ಮುಖಾಂತರ ಯೆಹೋವ ದೇವರ ವಾಕ್ಯ ಬಂತು.</verse>
				<verse number="8">ಯೆಹೂದದ ಅರಸನಾದ ಆಸನ ಇಪ್ಪತ್ತಾರನೆಯ ವರುಷದಲ್ಲಿ ಬಾಷನ ಮಗ ಏಲನು ಇಸ್ರಾಯೇಲಿನ ಮೇಲೆ ತಿರ್ಚದಲ್ಲಿ ಎರಡು ವರ್ಷ ಆಳಿದನು.</verse>
				<verse number="9">ಆದರೆ ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನ ಮನೆಯಲ್ಲಿ ಅವನು ಕುಡಿದು ಮತ್ತನಾಗಿರುವಾಗ, ಅರ್ಧ ರಥಗಳಿಗೆ ಅಧಿಪತಿಯಾಗಿರುವ ಅವನ ಸೇವಕನಾದ ಜಿಮ್ರಿಯನು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದನು.</verse>
				<verse number="10">ಜಿಮ್ರಿಯು ಒಳಗೆ ಹೋಗಿ ಯೆಹೂದದ ಅರಸನಾದ ಆಸನ ಇಪ್ಪತ್ತೇಳನೆಯ ವರ್ಷದಲ್ಲಿ, ಅವನನ್ನು ಕೆಡವಿ ಕೊಂದುಹಾಕಿ, ಅವನಿಗೆ ಬದಲಾಗಿ ಅರಸನಾದನು.</verse>
				<verse number="11">ಜಿಮ್ರಿಯು ಆಳಲು ಆರಂಭಿಸಿದಾಗ, ಅವನು ಸಿಂಹಾಸನದ ಮೇಲೆ ಕುಳಿತುಕೊಳ್ಳುತ್ತಲೇ, ಬಾಷನ ಮನೆಯವರನ್ನೆಲ್ಲಾ ಸಂಹರಿಸಿ, ಅವನ ಬಂಧುಗಳಲ್ಲಿಯೂ, ಅವನ ಸ್ನೇಹಿತರಲ್ಲಿಯೂ ಒಬ್ಬ ಗಂಡಸನನ್ನೂ ಉಳಿಸಲಿಲ್ಲ.</verse>
				<verse number="12">ಹೀಗೆಯೇ ಬಾಷನೂ ಅವನ ಮಗ ಏಲನೂ ತಮ್ಮ ಎಲ್ಲಾ ಪಾಪಗಳಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕೋಪವನ್ನು ಎಬ್ಬಿಸಿ, ತಾವು ಮಾಡಿದ ಪಾಪಗಳಿಂದಲೂ,</verse>
				<verse number="13">ತಾವು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ್ದರಿಂದಲೂ, ಯೆಹೋವ ದೇವರು ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೆ ವಿರೋಧವಾಗಿ ಹೇಳಿದ ಆತನ ವಾಕ್ಯದ ಪ್ರಕಾರವೇ ಜಿಮ್ರಿಯು ಬಾಷನ ಮನೆಯವರನ್ನೆಲ್ಲಾ ನಾಶಮಾಡಿದನು.</verse>
				<verse number="14">ಏಲನ ಇತರ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ ಇಸ್ರಾಯೇಲ್ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="15">ಯೆಹೂದದ ಅರಸನಾದ ಆಸನ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಏಳು ದಿನ ಆಳಿದನು. ಆಗ ಇಸ್ರಾಯೇಲರು ಫಿಲಿಷ್ಟಿಯರಿಗೆ ಸಂಬಂಧಪಟ್ಟ ಗಿಬ್ಬೆತೋನಿನ ಬಳಿಯಲ್ಲಿ ದಂಡಿಳಿಸಿದ್ದರು.</verse>
				<verse number="16">ಜಿಮ್ರಿಯು ಒಳಸಂಚುಮಾಡಿ, ಅರಸನನ್ನು ಕೊಂದು ಹಾಕಿದ್ದಾನೆಂದು ಅಲ್ಲಿ ಇಳಿದಿರುವ ದಂಡಿನವರು ಕೇಳಿದ್ದರಿಂದ, ಇಸ್ರಾಯೇಲರೆಲ್ಲರು ಅದೇ ದಿವಸದಲ್ಲಿ ದಂಡಿನ ಅಧಿಪತಿಯಾದ ಒಮ್ರಿಯನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ನೇಮಿಸಿದರು.</verse>
				<verse number="17">ಆಗ ಒಮ್ರಿಯೂ ಅವನ ಸಂಗಡ ಇಸ್ರಾಯೇಲರೆಲ್ಲರೂ ಗಿಬ್ಬೆತೋನನ್ನು ಬಿಟ್ಟು ಹೋಗಿ ತಿರ್ಚವನ್ನು ಮುತ್ತಿಗೆ ಹಾಕಿದರು.</verse>
				<verse number="18">ಪಟ್ಟಣವು ವಶವಾದದ್ದನ್ನು ಕಂಡಾಗ, ಜಿಮ್ರಿಯು ಅರಮನೆಯ ಅಂತಃಪುರದೊಳಗೆ ಪ್ರವೇಶಿಸಿ, ತನ್ನ ಅರಮನೆಯನ್ನು ಬೆಂಕಿಯಿಂದ ಸುಟ್ಟು ತಾನೂ ಸತ್ತನು.</verse>
				<verse number="19">ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ತಾನು ಮಾಡಿದ ಪಾಪಗಳ ನಿಮಿತ್ತವಾಗಿಯೂ, ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಅವನ ಪಾಪದ ನಿಮಿತ್ತವಾಗಿಯೂ ಆಯಿತು.</verse>
				<verse number="20">ಜಿಮ್ರಿಯ ಇತರ ಕಾರ್ಯಗಳೂ, ಅವನು, ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="21">ಆ ಕಾಲದಲ್ಲಿ ಇಸ್ರಾಯೇಲರೊಳಗೆ ಎರಡು ಪಕ್ಷಗಳುಂಟಾದವು, ಅರ್ಧ ಜನರು ಗೀನಾತನ ಮಗ ತಿಬ್ನಿಯನ್ನು ಅರಸನನ್ನಾಗಿ ಮಾಡಲು ಅವನ ಹಿಂದೆ ಹೋದರು, ಅರ್ಧ ಜನರು ಒಮ್ರಿಯ ಹಿಂದೆ ಹೋದರು.</verse>
				<verse number="22">ಆದರೆ ಒಮ್ರಿಯ ಸಮರ್ಥಕರು ಜಯಿಸಿದ್ದರಿಂದ ಗೀನಾತನ ಮಗನಾದ ತಿಬ್ನಿಯು ಸತ್ತುಹೋದನು, ಒಮ್ರಿಯು ಅರಸನಾದನು.</verse>
				<verse number="23">ಯೆಹೂದದ ಅರಸನಾದ ಆಸನ ಮೂವತ್ತೊಂದನೆಯ ವರ್ಷದಲ್ಲಿ, ಒಮ್ರಿಯು ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ, ಹನ್ನೆರಡು ವರ್ಷ ಆಳಿದನು, ಅದರಲ್ಲಿ ಆರು ವರ್ಷ ತಿರ್ಚದಲ್ಲಿ ಆಳಿದನು.</verse>
				<verse number="24">ಅವನು ಶೆಮೆರ್ ಎಂಬವನಿಗೆ ಆರು ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟು ಸಮಾರಿಯ ಎಂಬ ಬೆಟ್ಟವನ್ನು ಕೊಂಡುಕೊಂಡನು. ಆ ಬೆಟ್ಟದ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಜಮೀನಿನ ಯಜಮಾನನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ತಾನು ಕಟ್ಟಿಸಿದ ಪಟ್ಟಣಕ್ಕೆ ಸಮಾರ್ಯ ಎಂದು ಹೆಸರಿಟ್ಟನು.</verse>
				<verse number="25">ಆದರೆ ಒಮ್ರಿಯು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ತನಗೆ ಮುಂಚೆ ಇದ್ದ ಎಲ್ಲರಿಗಿಂತ ಕೆಟ್ಟವನಾಗಿ ನಡೆದನು.</verse>
				<verse number="26">ಅವನು ನೆಬಾಟನ ಮಗ ಯಾರೊಬ್ಬಾಮನ ಸಕಲ ಮಾರ್ಗಗಳಲ್ಲಿಯೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ತಮ್ಮ ವ್ಯರ್ಥವಾದವುಗಳಿಂದ ಕೋಪವನ್ನು ಎಬ್ಬಿಸಿದ ಹಾಗೆ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪದಲ್ಲಿಯೂ ನಡೆದನು.</verse>
				<verse number="27">ಒಮ್ರಿಯು ಮಾಡಿದ ಇತರ ಕಾರ್ಯಗಳೂ, ಅವನು ತೋರಿಸಿದ ಪರಾಕ್ರಮವೂ, ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="28">ಒಮ್ರಿಯು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಸಮಾರ್ಯ ಪಟ್ಟಣದಲ್ಲಿ ಅವನ ಶವವನ್ನು ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಅಹಾಬನು ಅರಸನಾದನು.</verse>
				<verse number="29">ಯೆಹೂದದ ಅರಸನಾದ ಆಸನ ಮೂವತ್ತೆಂಟನೆಯ ವರ್ಷದಲ್ಲಿ ಒಮ್ರಿಯ ಮಗ ಅಹಾಬನು ಇಸ್ರಾಯೇಲಿನ ಮೇಲೆ ಅರಸನಾಗಿ ಸಮಾರ್ಯದಲ್ಲಿ ಇಪ್ಪತ್ತೆರಡು ವರ್ಷ ಆಳಿದನು.</verse>
				<verse number="30">ಒಮ್ರಿಯ ಮಗ ಅಹಾಬನು ತನಗೆ ಮುಂಚೆ ಇದ್ದ ಎಲ್ಲರಿಗಿಂತ ಯೆಹೋವ ದೇವರ ಮುಂದೆ ಹೆಚ್ಚು ಕೆಟ್ಟತನ ಮಾಡಿದನು.</verse>
				<verse number="31">ನೆಬಾಟನ ಮಗ ಯಾರೊಬ್ಬಾಮನ ಪಾಪಗಳಲ್ಲಿ ನಡೆಯುವುದು ಅವನಿಗೆ ಅಲ್ಪವಾಗಿತ್ತು. ಅವನು ಸೀದೋನ್ಯರ ಅರಸನಾದ ಎತ್ಬಾಳನ ಮಗಳಾದ ಈಜೆಬೆಲಳನ್ನು ಮದುವೆಯಾಗಿ ಬಾಳನನ್ನು ಸೇವಿಸಿ ಅವನಿಗೆ ಅಡ್ಡಬಿದ್ದನು.</verse>
				<verse number="32">ಇದಲ್ಲದೆ ತಾನು ಸಮಾರ್ಯದಲ್ಲಿ ಕಟ್ಟಿಸಿದ ಬಾಳನ ಮನೆಯಲ್ಲಿ ಬಾಳನಿಗೆ ಬಲಿಪೀಠವನ್ನು ಕಟ್ಟಿಸಿದನು.</verse>
				<verse number="33">ಅಹಾಬನು ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆಯೇ ಅಹಾಬನು ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪ ಉಕ್ಕುವ ಹಾಗೆ ತನಗೆ ಮುಂಚಿನ ಇಸ್ರಾಯೇಲಿನ ಅರಸುಗಳೆಲ್ಲರಿಗಿಂತ ಅಧಿಕವಾಗಿ ಕೆಟ್ಟತನ ಮಾಡಿದನು.</verse>
				<verse number="34">ಅವನ ದಿವಸಗಳಲ್ಲಿ ಬೇತೇಲಿನ ಹೀಯೇಲನು ಯೆರಿಕೋವನ್ನು ಕಟ್ಟಿಸಿದನು. ಯೆಹೋವ ದೇವರು ನೂನನ ಮಗನಾದ ಯೆಹೋಶುವನ ಮುಖಾಂತರ ಹೇಳಿದ್ದ ವಾಕ್ಯದ ಪ್ರಕಾರವೇ ಅವನು ಅದಕ್ಕೆ ಅಸ್ತಿವಾರವನ್ನು ಹಾಕಿದಾಗ, ತನ್ನ ಚೊಚ್ಚಲಮಗನಾದ ಅಬೀರಾಮನನ್ನೂ, ಅದರ ಬಾಗಿಲುಗಳನ್ನು ಇಟ್ಟಾಗ ತನ್ನ ಕಿರಿ ಮಗನಾದ ಸೆಗೂಬನನ್ನೂ ಕಳೆದುಕೊಂಡನು.</verse>
			</chapter>
			<chapter number="17">
				<verse number="1">ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯ ಊರಿನವನಾದ ಎಲೀಯನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಮಾತಿನ ಪ್ರಕಾರ ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳವರೆಗೆ ಮಂಜಾಗಲಿ ಅಥವಾ ಮಳೆಯಾಗಲಿ ಬೀಳುವುದಿಲ್ಲ,” ಎಂದನು.</verse>
				<verse number="2">ಯೆಹೋವ ದೇವರ ಮಾತು ಅವನಿಗೆ ಉಂಟಾಗಿ,</verse>
				<verse number="3">“ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ, ಯೊರ್ದನಿಗೆ ಎದುರಿಗಿರುವ ಕೆರೀತ್ ಹಳ್ಳದ ಬಳಿಯಲ್ಲಿ ಅಡಗಿಕೊಂಡಿರು.</verse>
				<verse number="4">ಅಲ್ಲಿ ನೀನು ಆ ಹೊಳೆಯ ನೀರನ್ನು ಕುಡಿಯುವೆ. ಅಲ್ಲಿ ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ,” ಎಂದು ಹೇಳಿದನು.</verse>
				<verse number="5">ಅವನು ಹೋಗಿ ಯೆಹೋವ ದೇವರ ಮಾತಿನ ಹಾಗೆಯೇ ಮಾಡಿದನು. ಅವನು ಹೋಗಿ ಯೊರ್ದನಿಗೆ ಎದುರಾಗಿರುವ ಕೆರೀತ್ ಹಳ್ಳದ ಬಳಿಯಲ್ಲಿ ವಾಸವಾಗಿದ್ದನು.</verse>
				<verse number="6">ಕಾಗೆಗಳು ಅವನಿಗೆ ಉದಯಕಾಲದಲ್ಲಿ ರೊಟ್ಟಿಯನ್ನೂ, ಮಾಂಸವನ್ನೂ, ಸಂಜೆಯಲ್ಲಿ ರೊಟ್ಟಿಯನ್ನೂ, ಮಾಂಸವನ್ನೂ ತೆಗೆದುಕೊಂಡು ಬಂದವು, ಅವನು ಆ ಹೊಳೆಯ ನೀರನ್ನು ಕುಡಿದನು.</verse>
				<verse number="7">ಸ್ವಲ್ಪ ಕಾಲವಾದ ಮೇಲೆ ದೇಶದಲ್ಲಿ ಮಳೆ ಇಲ್ಲದ್ದರಿಂದ ಆ ಹಳ್ಳವು ಬತ್ತಿಹೋಯಿತು.</verse>
				<verse number="8">ಯೆಹೋವ ದೇವರ ವಾಕ್ಯವು ಅವನಿಗೆ ಉಂಟಾಗಿ,</verse>
				<verse number="9">“ನೀನೆದ್ದು ಸೀದೋನಿಗೆ ಹೊಂದಿದ ಚಾರೆಪತಕ್ಕೆ ಹೋಗಿ ಅಲ್ಲಿ ವಾಸವಾಗಿರು. ನಿನ್ನನ್ನು ಸಂರಕ್ಷಣೆ ಮಾಡಲು ಅಲ್ಲಿರುವ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ,” ಎಂದರು.</verse>
				<verse number="10">ಹಾಗೆಯೇ ಅವನೆದ್ದು ಚಾರೆಪತಕ್ಕೆ ಹೋಗಿ, ಪಟ್ಟಣದ ಬಾಗಿಲ ಬಳಿಗೆ ಬಂದಾಗ, ಅಲ್ಲಿ ಒಬ್ಬ ವಿಧವೆಯು ಕಟ್ಟಿಗೆಗಳನ್ನು ಆರಿಸಿಕೊಳ್ಳುತ್ತಾ ಇದ್ದಳು. ಅವನು ಅವಳನ್ನು ಕರೆದು, “ನೀನು ದಯಮಾಡಿ ನನಗೆ ಕುಡಿಯುವುದಕ್ಕೆ ಪಾತ್ರೆಯಲ್ಲಿ ಸ್ವಲ್ಪ ನೀರನ್ನು ತೆಗೆದುಕೊಂಡು ಬಾ,” ಎಂದನು.</verse>
				<verse number="11">ಅವಳು ತೆಗೆದುಕೊಂಡು ಬರಲು ಹೋಗುತ್ತಿರುವಾಗ ಅವನು ಅವಳನ್ನು ಕರೆದು, “ನೀನು ದಯಮಾಡಿ ನಿನ್ನ ಕೈಯಲ್ಲಿ ರೊಟ್ಟಿಯ ತುಂಡನ್ನು ನನಗೆ ತೆಗೆದುಕೊಂಡು ಬಾ,” ಎಂದನು.</verse>
				<verse number="12">ಅದಕ್ಕೆ ಅವಳು, “ನಿನ್ನ ದೇವರಾದ ಯೆಹೋವ ದೇವರಾಣೆ, ಮಡಕೆಯಲ್ಲಿ ಒಂದು ಹಿಡಿ ಹಿಟ್ಟೂ, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆಯ ಹೊರತಾಗಿ ನನಗೆ ಬೇರೇನೂ ಇಲ್ಲ. ನಾನೂ, ನನ್ನ ಪುತ್ರನೂ ಅದನ್ನು ತಿಂದು ಸತ್ತು ಹೋಗುವಹಾಗೆ ಅದನ್ನು ನನಗೂ, ಅವನಿಗೂ ಸಿದ್ಧಮಾಡಲು ಎರಡು ಕಟ್ಟಿಗೆಗಳನ್ನು ಕೂಡಿಸಿಕೊಂಡಿದ್ದೇನೆ,” ಎಂದಳು.</verse>
				<verse number="13">ಆಗ ಎಲೀಯನು ಅವಳಿಗೆ, “ಭಯಪಡಬೇಡ, ನೀನು ಹೇಳಿದ ಪ್ರಕಾರವೇ ಮಾಡು. ಆದರೆ ಮೊದಲು ಅದರಲ್ಲಿ ನನಗೆ ಒಂದು ಚಿಕ್ಕ ರೊಟ್ಟಿಮಾಡಿ, ನನ್ನ ಬಳಿಗೆ ತೆಗೆದುಕೊಂಡು ಬಾ. ತರುವಾಯ ನಿನಗೂ, ನಿನ್ನ ಮಗನಿಗೂ ಸಿದ್ಧಮಾಡಿಕೋ.</verse>
				<verse number="14">ಏಕೆಂದರೆ, ‘ಯೆಹೋವ ದೇವರು ಭೂಮಿಯ ಮೇಲೆ ಮಳೆಯನ್ನು ಕೊಡುವವರೆಗೂ ಮಡಕೆಯಲ್ಲಿರುವ ಹಿಟ್ಟು ತೀರುವುದಿಲ್ಲ. ಕುಡಿಕೆಯಲ್ಲಿರುವ ಎಣ್ಣೆಯು ಮುಗಿಯುವುದಿಲ್ಲ,’ ಎಂದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುತ್ತಾರೆ,” ಎಂದನು.</verse>
				<verse number="15">ಆಗ ಅವಳು ಹೋಗಿ ಎಲೀಯನ ಮಾತಿನ ಹಾಗೆಯೇ ಮಾಡಿದಳು. ಎಲೀಯನಿಗೂ, ಮಹಿಳೆಗೂ, ಆಕೆಯ ಮಗನಿಗೂ ಪ್ರತಿದಿನ ಸಾಕಾಗುವಷ್ಟು ಆಹಾರವಿತ್ತು.</verse>
				<verse number="16">ಯೆಹೋವ ದೇವರು ಎಲೀಯನ ಮುಖಾಂತರ ಹೇಳಿದ ವಾಕ್ಯದ ಪ್ರಕಾರವೇ ಮಡಕೆಯಲ್ಲಿರುವ ಹಿಟ್ಟು ತೀರದೆ, ಕುಡಿಕೆಯಲ್ಲಿರುವ ಎಣ್ಣೆಯು ಮುಗಿಯದೆ ಇತ್ತು.</verse>
				<verse number="17">ಸ್ವಲ್ಪ ಸಮಯದ ತರುವಾಯ, ಮನೆಯ ಯಜಮಾನಿಯಾದ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಕೊನೆಗೆ ರೋಗವು ಹೆಚ್ಚಾಗಿದ್ದುದರಿಂದ ಉಸಿರಾಡುವುದು ನಿಂತುಹೋಯಿತು.</verse>
				<verse number="18">ಆಗ ಅವಳು ಎಲೀಯನಿಗೆ, “ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವುದಕ್ಕೂ, ನನ್ನ ಮಗನು ಸಾಯುವುದಕ್ಕೂ ನನ್ನ ಬಳಿಗೆ ಬಂದಿಯೋ?” ಎಂದಳು.</verse>
				<verse number="19">ಅವನು ಅವಳಿಗೆ, “ನಿನ್ನ ಮಗನನ್ನು ನನಗೆ ಕೊಡು,” ಎಂದು ಹೇಳಿ, ಅವನನ್ನು ಅವಳ ಮಡಿಲಿನಿಂದ ಎತ್ತಿಕೊಂಡು, ತಾನು ವಾಸವಾಗಿದ್ದ ಮಾಳಿಗೆಯ ಕೋಣೆಗೆ ಹೋಗಿ, ಅವನನ್ನು ಮಂಚದ ಮೇಲೆ ಮಲಗಿಸಿದನು.</verse>
				<verse number="20">“ನನ್ನ ದೇವರಾದ ಯೆಹೋವ ದೇವರೇ, ವಿಧವೆಯ ಮಗನನ್ನು ಕೊಂದುಹಾಕುವ ಈ ದುರಂತ ಅವಳ ಮೇಲೆ ಬರಮಾಡಿದಿಯಲ್ಲಾ?” ಎಂದು ಯೆಹೋವ ದೇವರನ್ನು ಕೂಗಿ ಬೇಡಿದನು.</verse>
				<verse number="21">ಅವನು ಬಾಲಕನ ಮೇಲೆ ಮೂರು ಸಾರಿ ಬೋರಲು ಬಿದ್ದು, “ನನ್ನ ದೇವರಾದ ಯೆಹೋವ ದೇವರೇ, ಈ ಬಾಲಕನ ಪ್ರಾಣ ಅವನಲ್ಲಿ ತಿರುಗಿಬರಲಿ,” ಎಂದು ಯೆಹೋವ ದೇವರನ್ನು ಕೂಗಿದನು.</verse>
				<verse number="22">ಯೆಹೋವ ದೇವರು ಎಲೀಯನ ಪ್ರಾರ್ಥನೆಯನ್ನು ಕೇಳಿದ್ದರಿಂದ ಬಾಲಕನು ಬದುಕುವ ಹಾಗೆ ಅವನ ಪ್ರಾಣವು ಅವನೊಳಗೆ ತಿರುಗಿ ಬಂತು.</verse>
				<verse number="23">ಆಗ ಎಲೀಯನು ಬಾಲಕನನ್ನು ಎತ್ತಿಕೊಂಡು ಉಪ್ಪರಿಗೆಯಿಂದ ಕೆಳಗಿರುವ ಮನೆಗೆ ತೆಗೆದುಕೊಂಡು ಬಂದು, ಅವನನ್ನು ಅವನ ತಾಯಿಗೆ ಕೊಟ್ಟು, “ನೋಡು, ನಿನ್ನ ಮಗನು ಜೀವದಿಂದಿದ್ದಾನೆ,” ಎಂದು ಹೇಳಿದನು.</verse>
				<verse number="24">ಸ್ತ್ರೀಯು ಎಲೀಯನಿಗೆ, “ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಲ್ಲಿರುವ ಯೆಹೋವ ದೇವರ ವಾಕ್ಯವು ಸತ್ಯವೆಂದೂ ಇದರಿಂದ ಈಗ ತಿಳಿದಿದ್ದೇನೆ,” ಎಂದಳು.</verse>
			</chapter>
			<chapter number="18">
				<verse number="1">ಅನೇಕ ದಿವಸಗಳಾದ ತರುವಾಯ, ಮೂರನೆಯ ವರ್ಷದಲ್ಲಿ, ಯೆಹೋವ ದೇವರ ವಾಕ್ಯವು ಎಲೀಯನಿಗೆ ಬಂದಿತು, “ನೀನು ಹೋಗಿ ಅಹಾಬನಿಗೆ ನಿನ್ನನ್ನು ಪ್ರಕಟಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು,” ಎಂದು ಹೇಳಿದರು.</verse>
				<verse number="2">ಎಲೀಯನು ಅಹಾಬನಿಗೆ ತನ್ನನ್ನು ಪ್ರಕಟಿಸಿಕೊಳ್ಳಲು ಹೋದನು. ಆದರೆ ಸಮಾರ್ಯದಲ್ಲಿ ಬರವು ಘೋರವಾಗಿತ್ತು.</verse>
				<verse number="3">ಅಹಾಬನು ತನ್ನ ಮನೆಯ ಉಗ್ರಾಣಿಕನಾದ ಓಬದ್ಯನನ್ನು ಕರೆದನು. ಓಬದ್ಯನು ಯೆಹೋವ ದೇವರಿಗೆ ಬಹಳ ಭಯಭಕ್ತಿವುಳ್ಳವನಾಗಿದ್ದನು.</verse>
				<verse number="4">ಈಜೆಬೆಲಳು ಯೆಹೋವ ದೇವರ ಪ್ರವಾದಿಗಳನ್ನು ಕೊಲ್ಲುತ್ತಿದ್ದಾಗ, ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು, ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು, ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.</verse>
				<verse number="5">ಅಹಾಬನು ಓಬದ್ಯನಿಗೆ, “ನೀನು ದೇಶದಲ್ಲಿರುವ ಎಲ್ಲಾ ನೀರಿನ ಬುಗ್ಗೆಗಳ ಬಳಿಗೂ, ಎಲ್ಲಾ ಹಳ್ಳಗಳ ಬಳಿಗೂ ಹೋಗು. ನಾವು ಸಮಸ್ತ ಪಶುಗಳನ್ನು ಕಳೆದುಕೊಳ್ಳದ ಹಾಗೆ ಕುದುರೆಗಳನ್ನೂ, ಹೇಸರಗತ್ತೆಗಳನ್ನೂ ಜೀವದಿಂದ ಇರಿಸುವುದಕ್ಕೆ ನಮಗೆ ಒಂದು ವೇಳೆ ಹುಲ್ಲು ದೊರಕಬಹುದು. ಆಗ ನಾವು ಅವುಗಳನ್ನು ಕೊಲ್ಲುವ ಅವಶ್ಯಕತೆ ಇರುವುದಿಲ್ಲ,” ಎಂದನು.</verse>
				<verse number="6">ಅವರು ದೇಶವನ್ನು ಹಾದು ಹೋಗಲು, ಅದನ್ನು ವಿಭಾಗ ಮಾಡಿಕೊಂಡು ಅಹಾಬನು ಒಂದು ಮಾರ್ಗದಲ್ಲಿಯೂ, ಓಬದ್ಯನು ಮತ್ತೊಂದು ಮಾರ್ಗದಲ್ಲಿಯೂ ಪ್ರತ್ಯೇಕವಾಗಿ ಹೋದರು.</verse>
				<verse number="7">ಓಬದ್ಯನು ಮಾರ್ಗದಲ್ಲಿ ಹೋಗುತ್ತಿರುವಾಗ, ಎಲೀಯನು ಅವನನ್ನು ಸಂಧಿಸಿದನು. ಓಬದ್ಯನು ಅವನನ್ನು ಗುರುತಿಸಿ ಸಾಷ್ಟಾಂಗ ನಮಸ್ಕಾರಮಾಡಿ, “ನೀನು ನನ್ನ ಒಡೆಯನಾದ ಎಲೀಯನಲ್ಲವೋ?” ಎಂದನು.</verse>
				<verse number="8">ಎಲೀಯನು ಅವನಿಗೆ, “ನಾನೇ, ನೀನು ಹೋಗಿ, ‘ಎಲೀಯನು ಇಲ್ಲಿದ್ದಾನೆ’ ಎಂದು ನಿನ್ನ ಯಜಮಾನನಿಗೆ ಹೇಳು,” ಎಂದನು.</verse>
				<verse number="9">ಅದಕ್ಕವನು, “ಅಹಾಬನು ನನ್ನನ್ನು ಕೊಂದುಹಾಕುವ ಹಾಗೆ ನೀನು ನಿನ್ನ ಸೇವಕನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲು ನಾನೇನು ಪಾಪಮಾಡಿದೆನು?</verse>
				<verse number="10">ನಿನ್ನ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಯಜಮಾನನು ನಿನ್ನನ್ನು ಹುಡುಕಲು ಕಳುಹಿಸದ ಜನಾಂಗವೂ, ರಾಜ್ಯವೂ ಒಂದೂ ಇಲ್ಲ. ಅವರು, ‘ಎಲೀಯನು ನಮ್ಮಲ್ಲಿ ಇಲ್ಲ,’ ಎಂದು ಹೇಳಿದಾಗ, ಅಹಾಬನು ಆ ರಾಜ್ಯಕ್ಕೂ, ಜನಾಂಗಕ್ಕೂ ಆಣೆ ಇಡಿಸಿಕೊಂಡನು.</verse>
				<verse number="11">ಈಗ ನೀನು, ‘ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ತಿಳಿಸು,’ ಎಂದು ಹೇಳುತ್ತೀ.</verse>
				<verse number="12">ನಾನು ನಿನ್ನನ್ನು ಬಿಟ್ಟು ಹೋಗುವಾಗ, ಯೆಹೋವ ದೇವರ ಆತ್ಮರು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯುವರು. ನಾನು ಬಂದು ಅಹಾಬನಿಗೆ ತಿಳಿಸಿದಾಗ, ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕುವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕಂದಿನಿಂದ ಯೆಹೋವ ದೇವರನ್ನು ಆರಾಧಿಸುತ್ತೇನೆ.</verse>
				<verse number="13">ಈಜೆಬೆಲಳು ಪ್ರವಾದಿಗಳನ್ನು ಕೊಲ್ಲುತ್ತಿದ್ದ ಸಮಯದಲ್ಲಿ ಯೆಹೋವ ದೇವರ ಪ್ರವಾದಿಗಳನ್ನು ನೂರು ಮಂದಿಯನ್ನು, ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನೀನು ಕೇಳಿಸಿಕೊಳ್ಳಲಿಲ್ಲವೇ?</verse>
				<verse number="14">ಆದರೆ ಈಗ ನನ್ನ ಯಜಮಾನನು ನನ್ನನ್ನು ಕೊಂದುಹಾಕುವ ಹಾಗೆ, ‘ಎಲೀಯನು ಇದ್ದಾನೆ ಎಂದು ನೀನು ಹೋಗಿ ಅವನಿಗೆ ಹೇಳು,’ ಎಂಬುದಾಗಿ ನೀನು ಹೇಳುತ್ತೀ,” ಎಂದನು.</verse>
				<verse number="15">ಅದಕ್ಕೆ ಎಲೀಯನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸೇನಾಧೀಶ್ವರ ಯೆಹೋವ ದೇವರಾಣೆ, ಇಂದು ನನ್ನನ್ನು ಅವನಿಗೆ ತೋರಿಸಿಕೊಳ್ಳುವೆನು,” ಎಂದನು.</verse>
				<verse number="16">ಹೀಗೆ ಓಬದ್ಯನು ಅಹಾಬನೆದುರಿಗೆ ಹೋಗಿ ತಿಳಿಸಿದ್ದರಿಂದ ಅಹಾಬನು ಎಲೀಯನನ್ನು ಎದುರುಗೊಳ್ಳಲು ಹೋದನು.</verse>
				<verse number="17">ಅಹಾಬನು ಎಲೀಯನನ್ನು ಕಂಡಾಗ ಅವನಿಗೆ, “ಇಸ್ರಾಯೇಲನ್ನು ಕಷ್ಟಕ್ಕೆ ಒಳಪಡಿಸುವವನು ನೀನಲ್ಲವೋ?” ಎಂದನು.</verse>
				<verse number="18">ಅದಕ್ಕೆ ಅವನು, “ನಾನು ಇಸ್ರಾಯೇಲನ್ನು ಕಳವಳಪಡಿಸುವುದಿಲ್ಲ. ಆದರೆ ನೀನೂ, ನಿನ್ನ ತಂದೆಯ ಕುಟುಂಬದವರೂ ಯೆಹೋವ ದೇವರ ಆಜ್ಞೆಯನ್ನು ತೊರೆದುಬಿಟ್ಟು, ಬಾಳನನ್ನು ಹಿಂಬಾಲಿಸುವ ನೀವೇ ಕಳವಳಪಡಿಸುವವರು.</verse>
				<verse number="19">ಆದ್ದರಿಂದ ನೀನು ಕರ್ಮೆಲು ಬೆಟ್ಟದ ಬಳಿಯಲ್ಲಿ ಸಮಸ್ತ ಇಸ್ರಾಯೇಲನ್ನೂ, ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ, ಈಜೆಬೆಲಳ ಮೇಜಿನ ಹತ್ತಿರ ಭೋಜನಮಾಡುವ ಅಶೇರನ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕೂಡಿಸು,” ಎಂದನು.</verse>
				<verse number="20">ಹೀಗೆ ಅಹಾಬನು ಇಸ್ರಾಯೇಲರೆಲ್ಲರನ್ನೂ ಕರೆಯಿಸಿ, ಕರ್ಮೆಲು ಬೆಟ್ಟದ ಬಳಿಯಲ್ಲಿ ಪ್ರವಾದಿಗಳನ್ನು ಕೂಡಿಸಿದನು.</verse>
				<verse number="21">ಆಗ ಎಲೀಯನು ಸಕಲ ಜನರ ಬಳಿಗೆ ಬಂದು, “ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರವರೆಗೂ ನಿಂತುಕೊಂಡಿರುವಿರಿ? ಯೆಹೋವ ದೇವರು ದೇವರಾಗಿದ್ದರೆ, ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ, ಅವನನ್ನೇ ಹಿಂಬಾಲಿಸಿರಿ,” ಎಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.</verse>
				<verse number="22">ಆಗ ಎಲೀಯನು ಜನರಿಗೆ, “ಯೆಹೋವ ದೇವರ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ. ಆದರೆ ಬಾಳನ ಪ್ರವಾದಿಗಳು ನಾನೂರ ಐವತ್ತು ಮಂದಿಯಿದ್ದಾರೆ.</verse>
				<verse number="23">ಈಗ ಎರಡು ಹೋರಿಗಳನ್ನು ಅವರು ನಮಗೆ ಕೊಡಲಿ. ಒಂದು ಹೋರಿಯನ್ನು ಅವರು ಆಯ್ದುಕೊಂಡು, ಅದನ್ನು ತುಂಡುತುಂಡಾಗಿ ಕಡಿದು, ಬೆಂಕಿ ಹಾಕದೆ, ಕಟ್ಟಿಗೆಗಳ ಮೇಲೆ ಇಡಲಿ. ನಾನು ಇನ್ನೊಂದು ಹೋರಿಯನ್ನು ಹಾಗೆ ಮಾಡಿ, ಬೆಂಕಿ ಹಾಕದೆ ಕಟ್ಟಿಗೆಗಳ ಮೇಲೆ ಇಡುವೆನು.</verse>
				<verse number="24">ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಅನಂತರ ನಾನು ಯೆಹೋವ ದೇವರ ಹೆಸರು ಹೇಳಿ ಪ್ರಾರ್ಥಿಸುವೆನು. ಅವರಿಬ್ಬರಲ್ಲಿ ಯಾರು ಆಲಿಸಿ, ಬೆಂಕಿಯನ್ನು ಕಳುಹಿಸುವರೋ, ಅವರೇ ದೇವರೆಂದು ನಿಶ್ಚಯಿಸೋಣ,” ಎಂದನು. ಅದಕ್ಕೆ ಜನರೆಲ್ಲರು ಉತ್ತರವಾಗಿ, “ಈ ಮಾತು ಸರಿ,” ಎಂದರು.</verse>
				<verse number="25">ಆಗ ಎಲೀಯನು ಬಾಳನ ಪ್ರವಾದಿಗಳಿಗೆ, “ನೀವು ಅನೇಕರಾಗಿರುವುದರಿಂದ ಒಂದು ಹೋರಿಯನ್ನು ಆಯ್ದುಕೊಂಡು, ಅದನ್ನು ಮೊದಲು ಸಿದ್ಧಮಾಡಿ, ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ. ಆದರೆ ಬೆಂಕಿಯನ್ನು ಹೊತ್ತಿಸಬೇಡಿರಿ,” ಎಂದನು.</verse>
				<verse number="26">ಅವರು ತಮಗೆ ಕೊಟ್ಟ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. “ಬಾಳನೇ, ನಮಗೆ ಕಿವಿಗೊಡು,” ಎಂದು ಉದಯದಿಂದ ಮಧ್ಯಾಹ್ನದವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ, ಉತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.</verse>
				<verse number="27">ಮಧ್ಯಾಹ್ನದಲ್ಲಿ ಎಲೀಯನು ಅವರನ್ನು ಗೇಲಿಮಾಡಿ ಅವರಿಗೆ, “ದೊಡ್ಡ ಶಬ್ದದಿಂದ ಕೂಗಿರಿ, ಏಕೆಂದರೆ ಅವನು ಒಬ್ಬ ದೇವರಲ್ಲವೇ? ಒಂದು ವೇಳೆ ಅವನು ಧ್ಯಾನದಲ್ಲಿರಬಹುದು; ಇಲ್ಲವೆ ಯಾವುದೋ ಕೆಲಸದಲ್ಲಿರಬಹುದು; ಇಲ್ಲವೆ ಪ್ರಯಾಣದಲ್ಲಿದ್ದಾನೆ; ಇಲ್ಲವೆ ಅವನು ನಿದ್ದೆಯಲ್ಲಿದ್ದಾನೆ; ಈಗ ಅವನು ಎಚ್ಚರವಾಗಬೇಕು,” ಎಂದನು.</verse>
				<verse number="28">ಅವರು ದೊಡ್ಡ ಶಬ್ದದಿಂದ ಕೂಗಿ, ತಮ್ಮ ಕ್ರಮದ ಪ್ರಕಾರವೇ ರಕ್ತವು ತಮ್ಮ ಮೇಲೆ ಸೋರುವ ಮಟ್ಟಿಗೂ ಖಡ್ಗಗಳಿಂದಲೂ, ಚೂರಿಗಳಿಂದಲೂ ತಮ್ಮನ್ನು ಕೊಯ್ದುಕೊಂಡರು.</verse>
				<verse number="29">ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸುವ ವೇಳೆಯವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೆ ಶಬ್ದವಾದರೂ, ಉತ್ತರ ಕೊಡುವವನಾದರೂ, ಲಕ್ಷಿಸುವವನಾದರೂ ಇರಲಿಲ್ಲ.</verse>
				<verse number="30">ಆಗ ಎಲೀಯನು ಸಮಸ್ತ ಜನರಿಗೂ, “ನನ್ನ ಬಳಿಗೆ ಬನ್ನಿರಿ,” ಎಂದನು. ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತು ಹಾಕಿದ ಯೆಹೋವ ದೇವರ ಬಲಿಪೀಠವನ್ನು ಅವನು ದುರಸ್ತಿ ಮಾಡಿದನು.</verse>
				<verse number="31">“ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವುದು,” ಎಂದು ಯೆಹೋವ ದೇವರ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ, ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,</verse>
				<verse number="32">ಆ ಕಲ್ಲುಗಳಿಂದ ಯೆಹೋವ ದೇವರ ಹೆಸರಿಗೆ ಬಲಿಪೀಠವನ್ನು ಕಟ್ಟಿ, ಆ ಬಲಿಪೀಠದ ಸುತ್ತಲೂ ಇಪ್ಪತ್ತು ಸೇರು ಬೀಜವರೀ ನೆಲವನ್ನು ಅಗೆಸಿ, ಒಂದು ಕಾಲುವೆಯನ್ನು ಮಾಡಿದನು.</verse>
				<verse number="33">ತರುವಾಯ ಅವನು ಕಟ್ಟಿಗೆಗಳನ್ನು ಪೀಠದ ಮೇಲೆ ಇಟ್ಟು, ಹೋರಿಯನ್ನು ತುಂಡುತುಂಡಾಗಿ ಕಡಿದು, ಕಟ್ಟಿಗೆಗಳ ಮೇಲೆ ಇಟ್ಟು, “ನೀವು ನಾಲ್ಕು ಕೊಡ ನೀರು ತುಂಬಿಕೊಂಡು ದಹನಬಲಿಯ ಮೇಲೆಯೂ, ಕಟ್ಟಿಗೆಗಳ ಮೇಲೆಯೂ ಹೊಯ್ಯಿರಿ,” ಎಂದನು.</verse>
				<verse number="34">ಅವರು ಅವನು ಹೇಳಿದಂತೆ ಮಾಡಿದರು. ಆಗ ಎಲೀಯನು, “ಎರಡನೆಯ ಸಾರಿ ಹೊಯ್ಯಿರಿ,” ಎಂದನು. ಅವರು ಎರಡನೆಯ ಸಾರಿಯೂ ಹೊಯ್ದರು. ಮೂರನೆಯ ಸಾರಿ, “ಹೊಯ್ಯಿರಿ,” ಎಂದನು. ಮೂರನೆಯ ಸಾರಿಯೂ ಹೊಯ್ದರು.</verse>
				<verse number="35">ಆದ್ದರಿಂದ ನೀರು ಬಲಿಪೀಠದ ಸುತ್ತಲೂ ಹರಿಯಿತು. ಇದಲ್ಲದೆ ಅವನು ಕಾಲುವೆಯನ್ನು ನೀರಿನಿಂದ ತುಂಬಿಸಿದನು.</verse>
				<verse number="36">ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆಯಲ್ಲಿ ಪ್ರವಾದಿಯಾದ ಎಲೀಯನು ಬಲಿಪೀಠದ ಸಮೀಪಕ್ಕೆ ಬಂದು, “ಅಬ್ರಹಾಮನಿಗೂ, ಇಸಾಕನಿಗೂ, ಇಸ್ರಾಯೇಲಿಗೂ ದೇವರಾದ ಯೆಹೋವ ದೇವರೇ, ಇಸ್ರಾಯೇಲಿನಲ್ಲಿ ನೀವೇ ದೇವರೆಂದೂ, ನಾನು ನಿಮ್ಮ ಸೇವಕನೆಂದೂ, ನಾನು ಈ ಕಾರ್ಯಗಳನ್ನೆಲ್ಲಾ ನಿಮ್ಮ ಮಾತಿನ ಹಾಗೆಯೇ ಮಾಡಿದ್ದೇನೆಂದೂ ಇಂದು ತೋರಿಸಿಕೊಡಿರಿ.</verse>
				<verse number="37">ನೀವು ದೇವರಾದ ಯೆಹೋವ ದೇವರೆಂದೂ, ನೀವು ಅವರ ಹೃದಯವನ್ನು ತಿರುಗಿಸಿದ್ದೀರೆಂದೂ ಈ ಜನರು ತಿಳಿಯುವ ಹಾಗೆ ನನಗೆ ಉತ್ತರಕೊಡಿರಿ. ಯೆಹೋವ ದೇವರೇ, ನನಗೆ ಉತ್ತರಕೊಡಿರಿ” ಎಂದು ಬೇಡಿದನು.</verse>
				<verse number="38">ಕೂಡಲೇ ಯೆಹೋವ ದೇವರ ಬೆಂಕಿಯು ಇಳಿದುಬಂದು, ದಹನಬಲಿಯನ್ನೂ, ಕಟ್ಟಿಗೆಗಳನ್ನೂ, ಕಲ್ಲುಗಳನ್ನೂ, ಮಣ್ಣನ್ನೂ ಸುಟ್ಟುಬಿಟ್ಟು, ಕಾಲುವೆಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.</verse>
				<verse number="39">ಜನರೆಲ್ಲರು ಇದನ್ನು ಕಂಡಾಗ ಬೋರಲು ಬಿದ್ದು, “ಯೆಹೋವ ದೇವರೇ ದೇವರು! ಯೆಹೋವ ದೇವರೇ ದೇವರು!” ಎಂದರು.</verse>
				<verse number="40">ಆಗ ಎಲೀಯನು ಅವರಿಗೆ, “ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದೆ ಇರಲಿ,” ಎಂದನು. ಇವರು ಅವರನ್ನು ಹಿಡಿದರು. ಎಲೀಯನು ಅವರನ್ನು ಕೀಷೋನು ಹಳ್ಳದ ಬಳಿಗೆ ತೆಗೆದುಕೊಂಡುಹೋಗಿ ಅಲ್ಲಿ ಅವರನ್ನು ಕೊಂದುಹಾಕಿದನು.</verse>
				<verse number="41">ಅನಂತರ ಎಲೀಯನು ಅಹಾಬನಿಗೆ, “ನೀನು ಹೋಗಿ ತಿಂದು, ಕುಡಿ. ಏಕೆಂದರೆ ದೊಡ್ಡಮಳೆಯ ಶಬ್ದವು ಕೇಳಿಸುತ್ತದೆ,” ಎಂದನು.</verse>
				<verse number="42">ಅಹಾಬನು ತಿಂದು, ಕುಡಿಯುವುದಕ್ಕೆ ಹೋದನು. ಎಲೀಯನು ಕರ್ಮೆಲಿನ ಶಿಖರವನ್ನು ಏರಿ, ನೆಲದ ಮೇಲೆ ಬಿದ್ದು, ತನ್ನ ಮೊಣಕಾಲಿನ ಮಧ್ಯೆ ತಲೆಯನ್ನಿಟ್ಟನು.</verse>
				<verse number="43">ತನ್ನ ಸೇವಕನಿಗೆ, “ನೀನು ಹೋಗಿ ಸಮುದ್ರದ ಕಡೆಗೆ ನೋಡು,” ಎಂದನು. ಅವನು ಹೋಗಿ ನೋಡಿ, “ಏನೂ ಇಲ್ಲ,” ಎಂದನು. ಅವನು, “ಏಳು ಸಾರಿ ತಿರುಗಿ ಹೋಗಿ ನೋಡು,” ಎಂದನು.</verse>
				<verse number="44">ಏಳನೆಯ ಸಾರಿ ಇವನು ಹೋಗಿ ನೋಡಿದಾಗ, “ಇಗೋ, ಸಮುದ್ರದಿಂದ ಒಂದು ಮನುಷ್ಯನ ಅಂಗೈಯಷ್ಟು ಚಿಕ್ಕ ಮೇಘವು ಏಳುತ್ತಿದೆ,” ಎಂದನು. ಆಗ, “ನೀನು ಹೋಗಿ ಅಹಾಬನಿಗೆ ಬೇಗನೇ ರಥವನ್ನು ತೆಗೆದುಕೊಂಡು ಮಳೆಯು ನಿನ್ನನ್ನು ತಡೆಯದಂತೆ ಇಳಿದುಹೋಗೆಂದು ಹೇಳು,” ಎಂದನು.</verse>
				<verse number="45">ಆಗ ಇದ್ದಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ, ಗಾಳಿಯಿಂದಲೂ ಕಪ್ಪಾಗಿ ದೊಡ್ಡಮಳೆಯು ಉಂಟಾಯಿತು. ಅಹಾಬನು ರಥದಲ್ಲಿ ಏರಿ ಇಜ್ರೆಯೇಲ್ ಪಟ್ಟಣಕ್ಕೆ ಹೋದನು.</verse>
				<verse number="46">ಯೆಹೋವ ದೇವರ ಕೈ ಎಲೀಯನ ಮೇಲೆ ಇದ್ದುದರಿಂದ ಅವನು ತನ್ನ ಸಡಿಲವಾದ ಬಟ್ಟೆಗಳನ್ನು ನಡುಕಟ್ಟಿಕೊಂಡು ಇಜ್ರೆಯೇಲ್ ಪಟ್ಟಣದವರೆಗೂ ಅಹಾಬನಿಗೆ ಮುಂದಾಗಿ ಓಡಿದನು.</verse>
			</chapter>
			<chapter number="19">
				<verse number="1">ಎಲೀಯನು ಮಾಡಿದ್ದೆಲ್ಲವನ್ನೂ, ಅವನು ಖಡ್ಗದಿಂದ ಎಲ್ಲಾ ಪ್ರವಾದಿಗಳನ್ನು ಕೊಂದು ಹಾಕಿದ್ದೆಲ್ಲವನ್ನೂ, ಅಹಾಬನು ಈಜೆಬೆಲಳಿಗೆ ತಿಳಿಸಿದಾಗ,</verse>
				<verse number="2">ಈಜೆಬೆಲಳು ಎಲೀಯನ ಬಳಿಗೆ ದೂತನನ್ನು ಕಳುಹಿಸಿ, “ನಾನು ನಾಳೆ ಇಷ್ಟು ಹೊತ್ತಿಗೆ ಅವರಲ್ಲಿರುವ ಒಬ್ಬೊಬ್ಬನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವನ್ನು ತೆಗೆಯದೆ ಹೋದರೆ, ದೇವರುಗಳು ನನಗೆ ಬೇಕಾದದ್ದನ್ನು ಮಾಡಲಿ,” ಎಂದು ಹೇಳಿದಳು.</verse>
				<verse number="3">ಅವನು ಅದನ್ನು ಕೇಳಿ ಎದ್ದು, ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ, ಅಲ್ಲಿ ತನ್ನ ಸೇವಕನನ್ನು ಕಳುಹಿಸಿಬಿಟ್ಟನು.</verse>
				<verse number="4">ಆದರೆ ಅವನು ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತು, ತಾನು ಸಾಯಬೇಕೆಂದು ಅಪೇಕ್ಷಿಸಿ, “ಯೆಹೋವ ದೇವರೇ, ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಕೋ. ಏಕೆಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ,” ಎಂದನು.</verse>
				<verse number="5">ಅವನು ಜಾಲೀಗಿಡದ ಕೆಳಗೆ ಮಲಗಿಕೊಂಡು ನಿದ್ರೆಮಾಡಿದನು. ಆಗ ಒಬ್ಬ ದೂತನು ಅವನನ್ನು ತಟ್ಟಿ, ಅವನಿಗೆ, “ಎದ್ದು ತಿನ್ನು,” ಎಂದನು.</verse>
				<verse number="6">ಅವನು ಎದ್ದು ನೋಡಿದಾಗ, ಇಗೋ, ಕೆಂಡದಲ್ಲಿ ಬೇಯಿಸಿದ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು. ಆಗ ಅವನು ತಿಂದು, ಕುಡಿದು ತಿರುಗಿ ಮಲಗಿಕೊಂಡನು.</verse>
				<verse number="7">ತಿರುಗಿ ಎರಡನೆಯ ಸಾರಿ ಯೆಹೋವ ದೇವರ ದೂತನು ಬಂದು, ಅವನನ್ನು ತಟ್ಟಿ ಅವನಿಗೆ, “ನೀನೆದ್ದು ತಿನ್ನು, ಏಕೆಂದರೆ ನೀನು ಬಹುದೂರ ಪ್ರಯಾಣ ಮಾಡಬೇಕಾಗಿದೆ,” ಎಂದನು.</verse>
				<verse number="8">ಆಗ ಅವನೆದ್ದು ತಿಂದು, ಕುಡಿದು ಆ ಭೋಜನದ ಶಕ್ತಿಯಿಂದ ರಾತ್ರಿ ಹಗಲು ನಾಲ್ವತ್ತು ದಿವಸ ಹೋರೇಬ್ ಎಂಬ ದೇವರ ಬೆಟ್ಟದವರೆಗೂ ನಡೆದನು.</verse>
				<verse number="9">ಅವನು ಅಲ್ಲಿರುವ ಒಂದು ಗವಿಗೆ ಬಂದು ಅಲ್ಲಿ ವಾಸಿಸಿದನು. ಅಲ್ಲಿ ಅವನಿಗೆ ಯೆಹೋವ ದೇವರ ವಾಕ್ಯವು ಬಂದು, “ಎಲೀಯನೇ, ಇಲ್ಲಿ ಏನು ಮಾಡುತ್ತೀ?” ಎಂದರು.</verse>
				<verse number="10">ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.</verse>
				<verse number="11">ಆಗ ಯೆಹೋವ ದೇವರು, “ನೀನು ಹೊರಗೆ ಬಂದು ಬೆಟ್ಟದ ಮೇಲೆ ನನ್ನ ಮುಂದೆ ನಿಲ್ಲು. ಏಕೆಂದರೆ ನಾನು ನಿನ್ನ ಮುಂದೆ ಹಾದು ಹೋಗುತ್ತಿದ್ದೇನೆ,” ಎಂದನು. ಯೆಹೋವ ದೇವರ ಮುಂದೆ ಬೆಟ್ಟಗಳನ್ನು ಭೇದಿಸಿ, ಗುಡ್ಡಗಳನ್ನು ಒಡೆಯುವಂಥ ಮಹಾಬಲವಾದ ಗಾಳಿ, ಆ ಗಾಳಿಯಲ್ಲಿ ಯೆಹೋವ ದೇವರು ಇರಲಿಲ್ಲ. ಗಾಳಿಯ ತರುವಾಯ ಭೂಕಂಪವು, ಆ ಭೂಕಂಪದಲ್ಲಿ ಯೆಹೋವ ದೇವರು ಇರಲಿಲ್ಲ.</verse>
				<verse number="12">ಭೂಕಂಪದ ತರುವಾಯ ಬೆಂಕಿಯು, ಆ ಬೆಂಕಿಯಲ್ಲಿ ಯೆಹೋವ ದೇವರು ಇರಲಿಲ್ಲ. ಬೆಂಕಿಯ ತರುವಾಯ ಮೃದುವಾದ ಸ್ವರವು ಕೇಳಿಸಿತು.</verse>
				<verse number="13">ಎಲೀಯನು ಅದನ್ನು ಕೇಳಿದಾಗ, ತನ್ನ ಕಂಬಳಿಯಿಂದ ತನ್ನ ಮುಖವನ್ನು ಮುಚ್ಚಿಕೊಂಡು, ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ, ಇಲ್ಲಿ ಏನು ಮಾಡುತ್ತೀ?” ಎಂದು ವಾಣಿ ಕೇಳಿಸಿತು.</verse>
				<verse number="14">ಅದಕ್ಕೆ ಅವನು, “ಸರ್ವಶಕ್ತ ದೇವರಾದ ಯೆಹೋವ ದೇವರೇ, ಇಸ್ರಾಯೇಲರಿಗೋಸ್ಕರ ನಾನು ಬಹು ರೋಷವುಳ್ಳವನಾಗಿದ್ದೇನೆ. ಏಕೆಂದರೆ ಇಸ್ರಾಯೇಲರು ನಿಮ್ಮ ಒಡಂಬಡಿಕೆಯನ್ನು ಬಿಟ್ಟು, ನಿಮ್ಮ ಬಲಿಪೀಠಗಳನ್ನು ಕೆಡವಿ, ನಿಮ್ಮ ಪ್ರವಾದಿಗಳನ್ನು ಖಡ್ಗದಿಂದ ಕೊಂದುಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಲು ಹುಡುಕುತ್ತಿದ್ದಾರೆ,” ಎಂದನು.</verse>
				<verse number="15">ಆಗ ಯೆಹೋವ ದೇವರು ಅವನಿಗೆ, “ನೀನು ಬಂದ ಮಾರ್ಗದಲ್ಲಿ ದಮಸ್ಕದ ಮರುಭೂಮಿಗೆ ತಿರುಗಿಕೊಂಡು ಹೋಗಿ, ಅಲ್ಲಿ ತಲುಪಿದಾಗ, ಹಜಾಯೇಲನನ್ನು ಅರಾಮಿನ ಮೇಲೆ ಅರಸನಾಗಿರಲು ಅಭಿಷೇಕಿಸು.</verse>
				<verse number="16">ಇದಲ್ಲದೆ ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಿ, ಆಬೇಲ್ ಮೆಹೋಲ ಊರಿನವನಾದ ಶಾಫಾಟನ ಮಗನಾಗಿರುವ ಎಲೀಷನನ್ನು ನಿನಗೆ ಪ್ರತಿಯಾಗಿ ಪ್ರವಾದಿಯಾಗಿರಲು ಅಭಿಷೇಕಿಸು.</verse>
				<verse number="17">ಹಜಾಯೇಲನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಯೇಹುವಿನ ಖಡ್ಗಕ್ಕೆ ತಪ್ಪಿಸಿಕೊಂಡವರನ್ನು ಎಲೀಷನು ಕೊಂದುಹಾಕುವನು.</verse>
				<verse number="18">ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಮಂದಿಯನ್ನು ಇಸ್ರಾಯೇಲಿನಲ್ಲಿ ನನಗೋಸ್ಕರ ಉಳಿಸುವೆನು,” ಎಂದರು.</verse>
				<verse number="19">ಹಾಗೆಯೇ ಎಲೀಯನು ಅಲ್ಲಿಂದ ಹೊರಟು ಶಾಫಾಟನ ಮಗ ಎಲೀಷನನ್ನು ಕಂಡುಕೊಂಡನು. ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡಿ ಎತ್ತುಗಳಿಂದ ಹೊಲವನ್ನು ಉಳುತ್ತಿದ್ದನು. ಅವನು ಹನ್ನೆರಡನೆಯ ಜೋಡಿನ ಸಂಗಡ ಇದ್ದಾಗ, ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ, ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.</verse>
				<verse number="20">ಆಗ ಅವನು ಎತ್ತುಗಳನ್ನು ಬಿಟ್ಟು, ಎಲೀಯನ ಹಿಂದೆ ಓಡಿಹೋಗಿ ಅವನಿಗೆ, “ಅಪ್ಪಣೆಯಾದರೆ, ನಾನು ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬಂದು ನಿನ್ನನ್ನು ಹಿಂಬಾಲಿಸುವೆನು,” ಎಂದನು. ಎಲೀಯನು, “ಹೋಗು, ನಾನು ನಿನಗೆ ಏನು ಮಾಡಿದೆ?” ಎಂದನು.</verse>
				<verse number="21">ಆಗ ಎಲೀಷನು ಅವನನ್ನು ಬಿಟ್ಟು ತಿರುಗಿಕೊಂಡು ಒಂದು ಜೋಡು ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ, ನೊಗದ ಕಟ್ಟಿಗೆಯಿಂದ ಅವುಗಳ ಮಾಂಸವನ್ನು ಬೇಯಿಸಿ ಜನರಿಗೆ ಕೊಟ್ಟನು. ಅವರು ತಿಂದ ತರುವಾಯ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.</verse>
			</chapter>
			<chapter number="20">
				<verse number="1">ಅರಾಮಿನ ಅರಸನಾದ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿದನು. ಅವನ ಬಳಿಯಲ್ಲಿ ಕುದುರೆಗಳೂ ರಥಗಳೂ ಸಹಿತವಾಗಿ ಮೂವತ್ತೆರಡು ಮಂದಿ ಅರಸರಿದ್ದರು. ಅವನು ಹೋಗಿ ಸಮಾರ್ಯವನ್ನು ಮುತ್ತಿಗೆ ಹಾಕಿ, ಅದರ ಮೇಲೆ ಯುದ್ಧಮಾಡಿದನು.</verse>
				<verse number="2">ಅವನು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ದೂತರನ್ನು ಪಟ್ಟಣದೊಳಗೆ ಕಳುಹಿಸಿ, “ಬೆನ್ಹದದನು ಹೀಗೆ ಹೇಳುತ್ತಾನೆ:</verse>
				<verse number="3">‘ನಿನ್ನ ಬೆಳ್ಳಿಯೂ, ನಿನ್ನ ಬಂಗಾರವೂ ನನ್ನವು. ನಿನ್ನ ಪತ್ನಿಯರೂ, ನಿನ್ನ ಮಕ್ಕಳೆಲ್ಲರೂ ನನ್ನವರು,’ ” ಎಂಬುದಾಗಿ ಅವನಿಗೆ ಹೇಳಿದನು.</verse>
				<verse number="4">ಇಸ್ರಾಯೇಲಿನ ಅರಸನು ಉತ್ತರವಾಗಿ, “ಅರಸನಾದ ನನ್ನ ಒಡೆಯನೇ, ನಿನ್ನ ಮಾತಿನ ಹಾಗೆಯೇ ನಾನು ನಿನ್ನವನು, ನನಗುಂಟಾದ ಸಮಸ್ತವೂ ನಿನ್ನದು,” ಎಂದನು.</verse>
				<verse number="5">ಆ ದೂತರು ತಿರುಗಿಬಂದು ಅವನಿಗೆ, “ಬೆನ್ಹದದನು ಹೇಳುವುದೇನೆಂದರೆ, ‘ನಿನ್ನ ಬೆಳ್ಳಿಯನ್ನೂ, ನಿನ್ನ ಬಂಗಾರವನ್ನೂ, ನಿನ್ನ ಸ್ತ್ರೀಯರನ್ನೂ, ನಿನ್ನ ಮಕ್ಕಳನ್ನೂ, ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿ ಕಳುಹಿಸಿದೆನಲ್ಲವೇ?</verse>
				<verse number="6">ನಿಶ್ಚಯವಾಗಿ ನಾಳೆ ಇಷ್ಟು ಹೊತ್ತಿಗೆ ನಾನು ನನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸುವೆನು. ಅವರು ನಿನ್ನ ಅರಮನೆಯನ್ನೂ ನಿನ್ನ ಸೇವಕರ ಮನೆಗಳನ್ನೂ ಶೋಧಿಸಿ, ನಿಮಗೆ ಅಮೂಲ್ಯವಾದುವುಗಳನ್ನೆಲ್ಲಾ ಅವರು ತೆಗೆದುಕೊಂಡು ಹೋಗುವರು,’ ” ಎಂದನು.</verse>
				<verse number="7">ಆಗ ಇಸ್ರಾಯೇಲಿನ ಅರಸನು ದೇಶದ ಹಿರಿಯರನ್ನೆಲ್ಲಾ ಕರೆಯಿಸಿ ಅವರಿಗೆ, “ಇವನು ಎಂಥಾ ಕೇಡನ್ನು ಹುಡುಕುತ್ತಾನೆ, ಎಂದು ನೋಡಿರಿ. ಏಕೆಂದರೆ ಅವನು ನನ್ನ ಹೆಂಡತಿಯರಿಗೋಸ್ಕರವೂ, ನನ್ನ ಮಕ್ಕಳಿಗೋಸ್ಕರವೂ, ನನ್ನ ಬೆಳ್ಳಿಗೋಸ್ಕರವೂ, ನನ್ನ ಬಂಗಾರಕ್ಕೋಸ್ಕರವೂ ನನ್ನ ಬಳಿಗೆ ಕಳುಹಿಸಿದಾಗ, ನಾನು ಕೊಡುವುದಿಲ್ಲವೆಂದು ಅವನಿಗೆ ಹೇಳಲಿಲ್ಲ,” ಎಂದನು.</verse>
				<verse number="8">ಆಗ ಹಿರಿಯರೂ, ಜನರೂ ಅವನಿಗೆ, “ಅವನ ಮಾತು ಕೇಳದೆ ಒಪ್ಪದಿರು,” ಎಂದರು.</verse>
				<verse number="9">ಆದ್ದರಿಂದ ಅವನು ಬೆನ್ಹದದನ ದೂತರಿಗೆ, “ನೀವು ಅರಸನಾದ ನನ್ನ ಒಡೆಯನಿಗೆ ಹೇಳಬೇಕಾದದ್ದೇನೆಂದರೆ, ‘ನೀನು ಮೊದಲು ಹೇಳಿದ ಸಮಸ್ತವನ್ನೂ ಮಾಡುವೆನು. ಆದರೆ ಈ ಸಾರಿ ಹೇಳಿದ ಕಾರ್ಯವನ್ನು ನಾನು ಮಾಡಲಾರೆ,’ ಎಂದು ಹೇಳಿರಿ,” ಎಂದನು. ದೂತರು ಹೋಗಿ ಈ ಮಾತುಗಳನ್ನು ಬೆನ್ಹದದನಿಗೆ ಹೇಳಿದರು.</verse>
				<verse number="10">ಆಗ ಬೆನ್ಹದದನು ದೂತರನ್ನು ಕಳುಹಿಸಿ ಅಹಾಬನಿಗೆ, “ನನ್ನ ಸೈನಿಕರು ಸಮಾರ್ಯದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಬಿಟ್ಟರೆ ದೇವರುಗಳು ನನಗೆ ಇದಕ್ಕಿಂತ ಹೆಚ್ಚಾಗಿ ನನಗೆ ಕೆಟ್ಟದ್ದನ್ನು ಮಾಡಲಿ,” ಎಂದು ಅವನಿಗೆ ಇನ್ನೊಂದು ಸುದ್ದಿಯನ್ನು ಹೇಳಿ ಕಳುಹಿಸಿದನು.</verse>
				<verse number="11">ಅದಕ್ಕೆ ಇಸ್ರಾಯೇಲಿನ ಅರಸನು ಉತ್ತರವಾಗಿ, “ಅವನಿಗೆ ಹೇಳು, ‘ತನ್ನ ಆಯುಧಗಳನ್ನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೊಗಳಿಕೊಳ್ಳದೆ ಇರಲಿ’ ” ಎಂದನು.</verse>
				<verse number="12">ಬೆನ್ಹದದನೂ, ಅವನ ಸಂಗಡ ಡೇರೆಗಳಲ್ಲಿ ಕುಡಿಯುತ್ತಿದ್ದ ಅರಸರು, ಈ ವಾರ್ತೆಯನ್ನು ಕೇಳುತ್ತಲೇ, ಅವನು ತನ್ನ ಸೇವಕರಿಗೆ, “ಆಕ್ರಮಣ ಮಾಡುವುದಕ್ಕೆ ಸಿದ್ಧಮಾಡಿರಿ,” ಎಂದನು. ಹಾಗೆಯೇ ಪಟ್ಟಣಕ್ಕೆ ವಿರೋಧವಾಗಿ ಯುದ್ಧಕ್ಕೆ ಸಿದ್ಧಮಾಡಿದರು.</verse>
				<verse number="13">ಆಗ, ಒಬ್ಬ ಪ್ರವಾದಿಯು ಇಸ್ರಾಯೇಲಿನ ಅರಸನಾದ ಅಹಾಬನ ಬಳಿಗೆ ಬಂದು, “ಈ ದೊಡ್ಡ ಗುಂಪನ್ನು ನೋಡಿದೆಯೋ? ನಾನೇ ಯೆಹೋವ ದೇವರೆಂದು ನೀನು ತಿಳಿಯುವ ಹಾಗೆ ಈ ಹೊತ್ತು ಅದನ್ನು ನಿನ್ನ ಕೈಯಲ್ಲಿ ಒಪ್ಪಿಸಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.</verse>
				<verse number="14">ಅಹಾಬನು, “ಯಾರ ಕೈಯಿಂದ?” ಎಂದನು. ಅದಕ್ಕವನು, “ ‘ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳಿಂದಲೇ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. ಆಗ ಅಹಾಬನು, “ಯುದ್ಧ ಪ್ರಾರಂಭ ಮಾಡುವವನು ಯಾರು?” ಎಂದನು. ಅದಕ್ಕೆ ಆ ಪ್ರವಾದಿಯು, “ನೀನೇ,” ಎಂದನು.</verse>
				<verse number="15">ಅಹಾಬನು ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳನ್ನು ಲೆಕ್ಕಮಾಡಿದಾಗ ಅವರು ಇನ್ನೂರ ಮೂವತ್ತೆರಡು ಜನರಿದ್ದರು. ಅವರ ತರುವಾಯ ಇಸ್ರಾಯೇಲರಾದ ಸೈನಿಕರನ್ನು ಲೆಕ್ಕಮಾಡಿದಾಗ ಏಳು ಸಾವಿರ ಜನರಿದ್ದರು.</verse>
				<verse number="16">ಅವರು ಮಧ್ಯಾಹ್ನದಲ್ಲಿ ಹೊರಟರು. ಆದರೆ ಬೆನ್ಹದದನೂ, ಅವರ ಸಹಾಯಕರಾದ ಮೂವತ್ತೆರಡು ಮಂದಿ ಅರಸರೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.</verse>
				<verse number="17">ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳ ಮೊದಲು ಸೈನ್ಯವಾಗಿ ಬಂದರು. ಬೆನ್ಹದದನು ಪತ್ತೆದಾರರನ್ನು ಕಳುಹಿಸಿದನು. “ಅವರು ತಿರುಗಿಬಂದು ಸಮಾರ್ಯದಿಂದ ಸೈನಿಕರು ಬಂದಿದ್ದಾರೆ,” ಎಂದು ಅವನಿಗೆ ತಿಳಿಸಿದರು.</verse>
				<verse number="18">ಆಗ ಅವರು, “ಅವರು ಸಮಾಧಾನಕ್ಕೋಸ್ಕರ ಹೊರಟು ಬಂದಿದ್ದರೆ, ಅವರನ್ನು ಜೀವಿತರಾಗಿ ಹಿಡಿಯಿರಿ. ಯುದ್ಧಕ್ಕೋಸ್ಕರ ಹೊರಟು ಬಂದಿದ್ದರೆ, ಅವರನ್ನು ಜೀವಿತರಾಗಿ ಹಿಡಿಯಿರಿ,” ಎಂದನು.</verse>
				<verse number="19">ಪ್ರಾಂತಗಳ ಪ್ರಧಾನರ ಕಿರಿಯ ಅಧಿಕಾರಿಗಳೂ, ಅವರ ಹಿಂದೆ ಬಂದ ಸೈನಿಕರೂ, ಪಟ್ಟಣದಿಂದ ಹೊರಗೆ ಬಂದಾಗ,</verse>
				<verse number="20">ಪ್ರತಿ ಸೈನಿಕನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದರು. ಆಗ ಅರಾಮ್ಯರು ಓಡಿಹೋದರು. ಇಸ್ರಾಯೇಲರು ಅವರನ್ನು ಹಿಂದಟ್ಟಿದರು. ಅರಾಮಿನ ಅರಸನಾದ ಬೆನ್ಹದದನು ಕುದುರೆ ಹತ್ತಿಕೊಂಡು ಕುದುರೆ ರಾಹುತರ ಸಂಗಡ ತಪ್ಪಿಸಿಕೊಂಡನು.</verse>
				<verse number="21">ಇದಲ್ಲದೆ ಇಸ್ರಾಯೇಲಿನ ಅರಸನು ಹೊರಟು ಕುದುರೆಗಳನ್ನೂ, ರಥಗಳನ್ನೂ ಹೊಡೆದು, ಅರಾಮ್ಯರನ್ನು ಮಹಾ ಸಂಹಾರದಿಂದ ನಾಶಮಾಡಿಬಿಟ್ಟನು.</verse>
				<verse number="22">ಪ್ರವಾದಿಯು ಇಸ್ರಾಯೇಲಿನ ಅರಸನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಬಲಗೊಂಡು, ನೀನು ಏನು ಮಾಡಬೇಕೆಂಬುವುದನ್ನು ಆಲೋಚಿಸು. ಏಕೆಂದರೆ ವಸಂತ ಋತುವಿನಲ್ಲಿ ಅರಾಮಿನ ಅರಸನು ನಿನಗೆ ವಿರೋಧವಾಗಿ ಬರುವನು,” ಎಂದನು.</verse>
				<verse number="23">ಆದರೆ ಅರಾಮಿನ ಅರಸನ ಸೇವಕರು ಅವನಿಗೆ, “ಅವರ ದೇವರುಗಳು, ಪರ್ವತಗಳ ದೇವರುಗಳು, ಆದ್ದರಿಂದ ಅವರು ನಮ್ಮನ್ನು ಜಯಿಸಿದರು. ನಾವು ಅವರ ಸಂಗಡ ಸಮಭೂಮಿಯಲ್ಲಿ ಯುದ್ಧಮಾಡಿದರೆ, ನಿಶ್ಚಯವಾಗಿ ನಾವು ಅವರಿಗಿಂತ ಬಲಶಾಲಿಗಳಾಗಿರುವೆವು.</verse>
				<verse number="24">ಇದಲ್ಲದೆ ನೀನು ಮಾಡಬೇಕಾದದ್ದೇನೆಂದರೆ, ಅರಸರನ್ನು ತೆಗೆದುಹಾಕಿ ಅವರಿಗೆ ಪ್ರತಿಯಾಗಿ ಅಧಿಪತಿಗಳನ್ನು ನೇಮಿಸಬೇಕು.</verse>
				<verse number="25">ನಂತರ ನೀನು ಕಳೆದುಕೊಂಡ ಸೈನ್ಯದ ಹಾಗೆ ಕುದುರೆಗೆ ಕುದುರೆಯೂ, ರಥಕ್ಕೆ ರಥವೂ ಬೇರೆ ಸೈನ್ಯವನ್ನು ಲೆಕ್ಕಿಸು. ಆಗ ನಾವು ಸಮಭೂಮಿಯಲ್ಲಿ ಅವರ ಸಂಗಡ ಯುದ್ಧ ಮಾಡೋಣ. ನಿಶ್ಚಯವಾಗಿ ನಾವು ಅವರಿಗಿಂತ ಬಲಶಾಲಿಗಳಾಗುವೆವು,” ಎಂದರು. ಅವನು ಅವರ ಮಾತನ್ನು ಕೇಳಿ ಹಾಗೆಯೇ ಮಾಡಿದನು.</verse>
				<verse number="26">ವಸಂತ ಕಾಲದಲ್ಲಿ ಬೆನ್ಹದದನು ಅರಾಮ್ಯರನ್ನು ಲೆಕ್ಕಿಸಿ, ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಅಫೇಕಿಗೆ ಹೋದನು.</verse>
				<verse number="27">ಆದ್ದರಿಂದ ಇಸ್ರಾಯೇಲರು ಲೆಕ್ಕ ಮಾಡಿ ಆಹಾರವನ್ನು ಸಿದ್ಧಮಾಡಿಕೊಂಡು ಅವರಿಗೆ ಎದುರಾಗಿ ಹೊರಟರು. ಇಸ್ರಾಯೇಲರು ಅವರಿಗೆದುರಾಗಿ ದಂಡಿಳಿದಿರುವಾಗ, ಅವರು ಆಡುಮರಿಗಳ ಎರಡು ಮಂದೆಗಳ ಹಾಗಿದ್ದರು. ಆದರೆ ಅರಾಮ್ಯರು ಮೈದಾನದಲ್ಲಿ ಸಂಪೂರ್ಣವಾಗಿ ಆವರಿಸಿದ್ದರು.</verse>
				<verse number="28">ಆಗ ದೇವರ ಮನುಷ್ಯನೊಬ್ಬನು ಬಂದು ಇಸ್ರಾಯೇಲಿನ ಅರಸನಿಗೆ, “ಯೆಹೋವ ದೇವರು ತಗ್ಗುಗಳ ದೇವರಾಗಿರದೆ ಪರ್ವತಗಳ ದೇವರಾಗಿದ್ದನೆಂಬುದಾಗಿ ಅರಾಮ್ಯರು ಹೇಳಿದ್ದರಿಂದ, ‘ನಾನು ಯೆಹೋವ ದೇವರಾಗಿದ್ದೇನೆಂದು ನೀವು ತಿಳಿಯುವ ಹಾಗೆ ಆ ದೊಡ್ಡ ಸಮೂಹವನ್ನೆಲ್ಲಾ ನಿನ್ನ ಕೈಯಲ್ಲಿ ಒಪ್ಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.</verse>
				<verse number="29">ಏಳು ದಿವಸ ಎರಡು ಸೈನ್ಯಗಳೂ ಎದುರುಬದುರಾಗಿ ದಂಡಿಳಿದಿದ್ದರು. ಆದರೆ ಏಳನೆಯ ದಿವಸದಲ್ಲಿ ಯುದ್ಧಕ್ಕೆ ಕೂಡಿದಾಗ, ಇಸ್ರಾಯೇಲರು ಅರಾಮ್ಯರಲ್ಲಿ ಲಕ್ಷಮಂದಿ ಕಾಲಾಳುಗಳನ್ನು ಒಂದೇ ದಿವಸದಲ್ಲಿ ಸಂಹರಿಸಿದರು.</verse>
				<verse number="30">ಮಿಕ್ಕಾದವರು ಅಫೇಕೆಂಬ ಪಟ್ಟಣದೊಳಗೆ ಓಡಿಹೋದರು. ಅಲ್ಲಿ ಒಂದು ಗೋಡೆ ಉಳಿದುಕೊಂಡವರಲ್ಲಿ ಇಪ್ಪತ್ತೇಳು ಸಾವಿರ ಮಂದಿಯ ಮೇಲೆ ಬಿದ್ದಿತ್ತು. ಆದರೆ ಬೆನ್ಹದದನು ಪಟ್ಟಣಕ್ಕೆ ಓಡಿಬಂದು ಒಳ ಕೊಠಡಿಯಲ್ಲಿ ಬಚ್ಚಿಟ್ಟುಕೊಂಡನು.</verse>
				<verse number="31">ಆಗ ಅವನ ಸೇವಕರು ಅವನಿಗೆ, “ಇಸ್ರಾಯೇಲಿನ ಮನೆಯ ಅರಸರು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ. ನಾವು ಗೋಣಿಯನ್ನು ಸೊಂಟಕ್ಕೆ ಕಟ್ಟಿಕೊಂಡು, ಹಗ್ಗಗಳನ್ನು ನಮ್ಮ ತಲೆಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ. ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು,” ಎಂದರು.</verse>
				<verse number="32">ಹಾಗೆಯೇ ಅವರು ಗೋಣಿಯನ್ನು ತಮ್ಮ ನಡುವುಗಳಿಗೆ ಕಟ್ಟಿಕೊಂಡು, ಹಗ್ಗಗಳನ್ನು ತಮ್ಮ ತಲೆಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು, “ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ,” ಎಂದರು. ಅದಕ್ಕೆ ಅರಸನು, “ಅವನು ಇನ್ನೂ ಬದುಕಿದ್ದಾನೋ? ಅವನು ನನ್ನ ಸಹೋದರನು,” ಎಂದನು.</verse>
				<verse number="33">ಆದರೆ ಆ ಮನುಷ್ಯರು ಈ ಮಾತನ್ನು ಶುಭಸೂಚನೆಯಾಗಿ ನೆನಸಿ, ಅವನ ಮಾತಿಗೆ ಉತ್ತರವಾಗಿ, “ನಿನ್ನ ಸಹೋದರನಾದ ಬೆನ್ಹದದನು ಇದ್ದಾನೆ,” ಎಂದು ಹೇಳಿದರು. ಆಗ ಅಹಾಬನು, “ನೀವು ಹೋಗಿ ಅವನನ್ನು ಕರೆದುಕೊಂಡು ಬನ್ನಿರಿ,” ಎಂದನು. ಬೆನ್ಹದದನು ಅವನ ಬಳಿಗೆ ಹೊರಟುಬಂದಾಗ ಅಹಾಬನು ಅವನನ್ನು ರಥದಲ್ಲಿ ಕುಳ್ಳಿರಿಸಿಕೊಂಡನು.</verse>
				<verse number="34">ಆಗ ಬೆನ್ಹದದನು ಅವನಿಗೆ, “ನನ್ನ ತಂದೆಯು ನಿನ್ನ ತಂದೆಯಿಂದ ತೆಗೆದುಕೊಂಡ ಪಟ್ಟಣಗಳನ್ನು ತಿರುಗಿಕೊಡುತ್ತೇನೆ. ನನ್ನ ತಂದೆ ಸಮಾರ್ಯದಲ್ಲಿ ಮಾಡಿದ ಹಾಗೆಯೇ, ದಮಸ್ಕದಲ್ಲಿ ನೀನು ನಿನಗಾಗಿ ಬೀದಿಗಳನ್ನು ಮಾಡಿಸಬೇಕು,” ಎಂದನು. ಅದಕ್ಕೆ ಅಹಾಬನು, “ಈ ಒಡಂಬಡಿಕೆಯ ಪ್ರಕಾರವೇ ನಿನ್ನನ್ನು ಕಳುಹಿಸಿಬಿಡುತ್ತೇನೆ,” ಎಂದನು. ಹೀಗೆಯೇ ಅಹಾಬನು ಬೆನ್ಹದದನ ಸಂಗಡ ಒಡಂಬಡಿಕೆಯನ್ನು ಮಾಡಿ, ಅವನನ್ನು ಕಳುಹಿಸಿಬಿಟ್ಟನು.</verse>
				<verse number="35">ಆದರೆ ಪ್ರವಾದಿಗಳ ಮಂಡಲಿಯಲ್ಲಿ ಒಬ್ಬನು ಯೆಹೋವ ದೇವರ ಮಾತಿನಿಂದ ತನ್ನ ಜೊತೆಗಾರನಿಗೆ, “ನೀನು ನಿನ್ನ ಆಯುಧದಿಂದ ನನ್ನನ್ನು ಹೊಡೆ,” ಎಂದನು. ಆದರೆ ಆ ಜೊತೆಗಾರನನ್ನು ಹೊಡೆಯಲೊಲ್ಲದೆ ಇದ್ದನು.</verse>
				<verse number="36">ಆಗ ಪ್ರವಾದಿಯು ಇವನಿಗೆ, “ನೀನು ಯೆಹೋವ ದೇವರ ಮಾತನ್ನು ಕೇಳದೆ ಹೋದದ್ದರಿಂದ, ನೀನು ನನ್ನನ್ನು ಬಿಟ್ಟು ಹೋಗುವಾಗ ಸಿಂಹವು ನಿನ್ನನ್ನು ಕೊಲ್ಲುವುದು,” ಎಂದನು. ಅವನು ಪ್ರವಾದಿಯನ್ನು ಬಿಟ್ಟು ಹೋದಾಗಲೇ ಸಿಂಹವು ಅವನನ್ನು ಕಂಡು ಕೊಂದುಹಾಕಿತು.</verse>
				<verse number="37">ಪ್ರವಾದಿಯು ಮತ್ತೊಬ್ಬನನ್ನು ಕಂಡುಕೊಂಡು, “ದಯಮಾಡಿ, ನನ್ನನ್ನು ಹೊಡೆ,” ಎಂದನು. ಆ ಮನುಷ್ಯನು ಅವನನ್ನು ಗಾಯವಾಗುವಷ್ಟು ಹೊಡೆದನು.</verse>
				<verse number="38">ಆಗ ಪ್ರವಾದಿಯು ಹೋಗಿ ತನ್ನ ಕಣ್ಣುಗಳನ್ನು ಮುಂಡಾಸದಿಂದ ಮುಚ್ಚಿಕೊಂಡು ತನ್ನನ್ನು ಮರೆಮಾಡಿಕೊಂಡು, ಅರಸನಾದ ಅಹಾಬನಿಗೋಸ್ಕರ ಮಾರ್ಗದಲ್ಲಿ ಕಾದುಕೊಂಡಿದ್ದನು.</verse>
				<verse number="39">ಅರಸನು ಹಾದು ಹೋಗುತ್ತಿರುವಾಗ, ಪ್ರವಾದಿಯು ಅರಸನಿಗೆ ಕೂಗಿ ಹೇಳಿದ್ದೇನೆಂದರೆ, “ನಿನ್ನ ಸೇವಕನು ಯುದ್ಧಕ್ಕೆ ಹೋಗಿರುವಾಗ ಇಗೋ, ಒಬ್ಬ ಮನುಷ್ಯನು ಸೆರೆಯವನನ್ನು ನನ್ನ ಬಳಿಗೆ ಹಿಡಿದುಕೊಂಡು ಬಂದು, ‘ಈ ಮನುಷ್ಯನನ್ನು ಕಾಯಿ. ಇವನು ತಪ್ಪಿಸಿಕೊಂಡುಹೋದರೆ ನಿನ್ನ ಪ್ರಾಣವು ಇವನ ಪ್ರಾಣಕ್ಕೆ ಬದಲಾಗಿರುವುದು. ಇಲ್ಲವೆ ನೀನು ಮೂರು ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಡಬೇಕು,’ ಎಂದನು.</verse>
				<verse number="40">ಆದರೆ ನಿನ್ನ ಸೇವಕನು ಇಲ್ಲಿ ಕೆಲಸ ಮಾಡುತ್ತಿರುವಾಗ ಅವನು ತಪ್ಪಿಸಿಕೊಂಡುಹೋದನು,” ಎಂದನು. ಇಸ್ರಾಯೇಲಿನ ಅರಸನು ಅವನಿಗೆ, “ನಿನ್ನ ತೀರ್ಪಿನ ಹಾಗೆಯೇ ಆಗಲಿ, ನೀನು ಸರಿಯಾಗಿ ನಿರ್ಣಯಿಸಿದಿ,” ಎಂದನು.</verse>
				<verse number="41">ಆಗ ಅವನು ಶೀಘ್ರವಾಗಿ ತನ್ನ ಕಣ್ಣುಗಳ ಮೇಲೆ ಇರುವ ಮುಂಡಾಸವನ್ನು ತೆಗೆದು ಹಾಕಿದ್ದರಿಂದ ಇಸ್ರಾಯೇಲಿನ ಅರಸನು ಅವನು ಪ್ರವಾದಿಗಳಲ್ಲಿ ಒಬ್ಬನೆಂದು ತಿಳಿದುಕೊಂಡನು.</verse>
				<verse number="42">ಆಗ ಪ್ರವಾದಿಯು ಅಹಾಬನಿಗೆ, “ಯೆಹೋವ ದೇವರು ಹೇಳುವುದೇನೆಂದರೆ, ‘ನಾನು ಪೂರ್ಣ ನಾಶಕ್ಕೆ ಒಪ್ಪಿಸಿದ ಮನುಷ್ಯನನ್ನು ನೀನು ಬಿಟ್ಟುಬಿಟ್ಟ ಕಾರಣ, ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣ ಹೋಗುವುದು, ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು,’ ” ಎಂದನು.</verse>
				<verse number="43">ಆಗ ಇಸ್ರಾಯೇಲಿನ ಅರಸನು ಬೇಸರದಿಂದಲೂ, ಕೋಪದಿಂದಲೂ ತನ್ನ ಅರಮನೆಗೆ ಹೋಗಲು ಹೊರಟು ಸಮಾರ್ಯಕ್ಕೆ ಬಂದನು.</verse>
			</chapter>
			<chapter number="21">
				<verse number="1">ಕೆಲವು ಕಾಲದ ನಂತರ, ಇಜ್ರೆಯೇಲ್ ಪಟ್ಟಣದಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಯೇಲಿನವನಾದ ನಾಬೋತನಿಗೆ ಒಂದು ದ್ರಾಕ್ಷಿ ತೋಟವಿತ್ತು.</verse>
				<verse number="2">ಅಹಾಬನು ನಾಬೋತನಿಗೆ, “ತೋಟವು ನನ್ನ ಮನೆಯ ಬಳಿಯಲ್ಲಿ ಇರುವುದರಿಂದ ಅದು ನನಗೆ ಕಾಯಿಪಲ್ಯದ ತೋಟವಾಗುವ ಹಾಗೆ ಅದನ್ನು ನನಗೆ ಕೊಡು. ನಾನು ಅದಕ್ಕೆ ಬದಲಾಗಿ ಅದಕ್ಕಿಂತ ಒಳ್ಳೆಯ ದ್ರಾಕ್ಷಿತೋಟವನ್ನು ನಿನಗೆ ಕೊಡುವೆನು. ಇಲ್ಲವೆ ನಿನ್ನ ದೃಷ್ಟಿಗೆ ಒಳ್ಳೆಯದಾಗಿದ್ದರೆ, ಹಣದಲ್ಲಿ ಅದರ ಬೆಲೆಯನ್ನು ಕೊಡುವೆನು,” ಎಂದನು.</verse>
				<verse number="3">ಆದರೆ ನಾಬೋತನು ಅಹಾಬನಿಗೆ, “ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡದಂತೆ ಯೆಹೋವ ದೇವರು ನನ್ನನ್ನು ತಡೆಯಲಿ,” ಎಂದನು.</verse>
				<verse number="4">“ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವುದಿಲ್ಲ,” ಎಂದು ಇಜ್ರೆಯೇಲಿನವನಾದ ನಾಬೋತನು ಹೇಳಿದ ಮಾತಿಗೋಸ್ಕರ, ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು, ತನ್ನ ಮಂಚದ ಮೇಲೆ ಮಲಗಿ, ತನ್ನ ಮುಖವನ್ನು ತಿರುಗಿಸಿಕೊಂಡು ಊಟಮಾಡದೆ ಇದ್ದನು.</verse>
				<verse number="5">ಆಗ ಅವನ ಹೆಂಡತಿ ಈಜೆಬೆಲಳು ಅವನ ಬಳಿಗೆ ಬಂದು ಅವನಿಗೆ, “ನೀನು ವ್ಯಸನವಾಗಿರುವುದೇಕೆ? ಯಾಕೆ ಊಟಮಾಡುವುದಿಲ್ಲ?” ಎಂದಳು.</verse>
				<verse number="6">ಅವನು ಅವಳಿಗೆ, “ಏಕೆಂದರೆ ನಾನು ಇಜ್ರೆಯೇಲಿನವನಾದ ನಾಬೋತನ ಸಂಗಡ ಮಾತನಾಡಿ, ‘ನಿನ್ನ ದ್ರಾಕ್ಷಿತೋಟವನ್ನು ನನಗೆ ಕ್ರಯಕ್ಕೆ ಕೊಡು. ಇಲ್ಲವೆ ನಿನಗೆ ಮನಸ್ಸಿದ್ದರೆ ಅದಕ್ಕೆ ಬದಲಾಗಿ ಬೇರೆ ದ್ರಾಕ್ಷಿತೋಟವನ್ನು ಕೊಡುವೆನು,’ ಎಂದು ಅವನಿಗೆ ಹೇಳಿದೆನು. ಅದಕ್ಕವನು, ‘ನನ್ನ ದ್ರಾಕ್ಷಿತೋಟವನ್ನು ಕೊಡುವುದಿಲ್ಲ,’ ” ಎಂದು ಹೇಳಿದನು.</verse>
				<verse number="7">ಆಗ ಅವನ ಹೆಂಡತಿ ಈಜೆಬೆಲಳು ಅವನಿಗೆ, “ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೋ? ಎದ್ದು ಊಟಮಾಡು. ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೆಯೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ನಿನಗೆ ಕೊಡಿಸುತ್ತೇನೆ,” ಎಂದಳು.</verse>
				<verse number="8">ಹೀಗೆ ಅವಳು ಅಹಾಬನ ಹೆಸರಿನಲ್ಲಿ ಪತ್ರಗಳನ್ನು ಬರೆದು, ಅವುಗಳಿಗೆ ಅವನ ಮುದ್ರೆಹಾಕಿ, ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯರಿಗೂ, ಗೌರವಸ್ಥರಿಗೂ ಕಳುಹಿಸಿದಳು.</verse>
				<verse number="9">ಅವಳು ಪತ್ರಗಳಲ್ಲಿ, “ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ಕೂರಿಸಿ,</verse>
				<verse number="10">‘ನೀನು ದೇವರನ್ನೂ, ಅರಸನನ್ನೂ ದೂಷಿಸಿದಿ,’ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ದುಷ್ಟರಾದ ಇಬ್ಬರು ಮನುಷ್ಯರನ್ನು ಕೂರಿಸಿರಿ. ತರುವಾಯ ಅವನನ್ನು ಹೊರಗೆ ತೆಗೆದುಕೊಂಡುಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ,” ಎಂದು ಬರೆದಿತ್ತು.</verse>
				<verse number="11">ಆಗ ಅವನ ಪಟ್ಟಣದ ಮನುಷ್ಯರೂ, ಅವನ ಪಟ್ಟಣದ ನಿವಾಸಿಗಳೂ ಆದ ಹಿರಿಯರೂ, ಗೌರವಸ್ಥರೂ, ಈಜೆಬೆಲಳು ಅವರಿಗೆ ಕಳುಹಿಸಿದ ಪ್ರಕಾರವೂ, ಅವಳು ಅವರ ಬಳಿಗೆ ಕಳುಹಿಸಿದ ಪತ್ರಗಳಲ್ಲಿ ಬರೆದ ಪ್ರಕಾರವೂ ಮಾಡಿದರು.</verse>
				<verse number="12">ಅವರು ಉಪವಾಸವನ್ನು ಪ್ರಕಟಮಾಡಿ, ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ಕೂರಿಸಿದರು.</verse>
				<verse number="13">ಆಗ ದುಷ್ಟರಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತುಕೊಂಡರು. ಈ ದುಷ್ಟಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ, “ಈ ನಾಬೋತನು ದೇವರನ್ನೂ, ಅರಸನನ್ನೂ ದೂಷಿಸಿದನು,” ಎಂದು ಸಾಕ್ಷಿ ಹೇಳಿದರು. ಆಗ ನಾಬೋತನನ್ನು ಪಟ್ಟಣದ ಹೊರಗೆ ಕರೆದುಕೊಂಡು ಹೋಗಿ, ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು.</verse>
				<verse number="14">ಅವನು ಸತ್ತನು. ಅವರು ಈಜೆಬೆಲಳಿಗೆ, “ನಾಬೋತನು ಕಲ್ಲೆಸೆತದಿಂದ ಸತ್ತನು,” ಎಂದು ಹೇಳಿ ಕಳುಹಿಸಿದರು.</verse>
				<verse number="15">ನಾಬೋತನು ಕಲ್ಲೆಸೆತದಿಂದ ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ, ಅವಳು ಅಹಾಬನಿಗೆ, “ನೀನೆದ್ದು ಇಜ್ರೆಯೇಲಿನವನಾದ ನಾಬೋತನು ಕ್ರಯಕ್ಕೆ ಕೊಡಲು ಸಮ್ಮತಿಸದಿದ್ದ ದ್ರಾಕ್ಷಿತೋಟವನ್ನು ಸ್ವಾಧೀನ ಮಾಡಿಕೋ. ಏಕೆಂದರೆ ನಾಬೋತನು ಜೀವದಿಂದಿಲ್ಲ, ಸತ್ತಿದ್ದಾನೆ,” ಎಂದಳು.</verse>
				<verse number="16">ನಾಬೋತನು ಸತ್ತನೆಂದು ಅಹಾಬನು ಕೇಳಿದಾಗ, ಅವನೆದ್ದು ಇಜ್ರೆಯೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ಸ್ವಾಧೀನಮಾಡಿಕೊಳ್ಳಲು ಹೋದನು.</verse>
				<verse number="17">ಆಗ ಯೆಹೋವ ದೇವರ ವಾಕ್ಯವು ತಿಷ್ಬೀಯನಾದ ಎಲೀಯನಿಗೆ ಉಂಟಾಗಿ,</verse>
				<verse number="18">“ನೀನೆದ್ದು ಸಮಾರ್ಯದಲ್ಲಿರುವ ಇಸ್ರಾಯೇಲಿನ ಅರಸನಾದ ಅಹಾಬನಿಗೆ ಎದುರಾಗಿ ಹೋಗು. ಅವನು ನಾಬೋತನ ದ್ರಾಕ್ಷಿ ತೋಟದಲ್ಲಿದ್ದಾನೆ. ಅದನ್ನು ಸ್ವಾಧೀನಮಾಡಿಕೊಳ್ಳಲು ಅಲ್ಲಿಗೆ ಹೋಗಿದ್ದಾನೆ.</verse>
				<verse number="19">ನೀನು ಅವನಿಗೆ, ‘ನೀನು ಕೊಂದುಹಾಕಿ ಸ್ವಾಧೀನ ಮಾಡಿಕೊಂಡಿಯಲ್ಲಾ. ಆದ್ದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕುವುವು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.</verse>
				<verse number="20">ಆಗ ಅಹಾಬನು ಎಲೀಯನಿಗೆ, “ನನ್ನ ಶತ್ರುವೇ, ನೀನು ನನ್ನನ್ನು ಕಂಡುಹಿಡಿದೆಯಾ,” ಎಂದನು. ಅದಕ್ಕೆ ಎಲೀಯನು, “ಕಂಡುಕೊಂಡೆನು, ನೀನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡದ್ದರಿಂದ,</verse>
				<verse number="21">‘ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ, ನಿನ್ನ ಸಂತತಿಯನ್ನು ತೆಗೆದುಹಾಕಿ, ಅಹಾಬನಿಗೆ ಒಬ್ಬ ಗಂಡು ಮಗುವನ್ನಾದರೂ ಉಳಿಸದೆ ಇಸ್ರಾಯೇಲಿನಲ್ಲಿ ಎಲ್ಲರನ್ನು ತೆಗೆದುಹಾಕಿಬಿಡುವೆನು.</verse>
				<verse number="22">ನೀನು ನನಗೆ ಎಬ್ಬಿಸಿದ ಕೋಪದ ನಿಮಿತ್ತವೂ, ಇಸ್ರಾಯೇಲನ್ನು ಪಾಪ ಮಾಡುವಂತೆ ಮಾಡಿದ್ದರ ನಿಮಿತ್ತವೂ, ನಾನು ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ, ಅಹೀಯನ ಮಗ ಬಾಷನ ಮನೆಯ ಹಾಗೆಯೂ ಮಾಡುವೆನು, ಎಂದನು.’</verse>
				<verse number="23">“ಈಜೆಬೆಲಳನ್ನು ಕುರಿತು ಯೆಹೋವ ದೇವರು, ‘ನಾಯಿಗಳು ಈಜೆಬೆಲಳನ್ನು ಇಜ್ರೆಯೇಲ್ ಗೋಡೆಯ ಬಳಿಯಲ್ಲಿ ತಿನ್ನುವುವು.’</verse>
				<verse number="24">“ಅಹಾಬನ ಕುಟುಂಬದವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ, ಅವನನ್ನು ನಾಯಿಗಳು ತಿನ್ನುವುವು. ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವುವು, ಎಂದು ಹೇಳುತ್ತಾರೆ,” ಎಂದನು.</verse>
				<verse number="25">ತನ್ನ ಹೆಂಡತಿ ಈಜೆಬೆಲಳಿಂದ ಪ್ರೇರೇಪಿತನಾಗಿ, ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿ ಬಿಟ್ಟ ಅಹಾಬನ ಹಾಗೆ ದುಷ್ಟನು ಇನ್ನೊಬ್ಬನು ಇರಲಿಲ್ಲ.</verse>
				<verse number="26">ಇದಲ್ಲದೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಅಮೋರಿಯರು ಮಾಡಿದ ಎಲ್ಲಾ ವಿಗ್ರಹಗಳನ್ನು ಹಿಂಬಾಲಿಸಿ ಅಸಹ್ಯವಾಗಿ ನಡೆದನು.</verse>
				<verse number="27">ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ, ಅವನು ತನ್ನ ವಸ್ತ್ರಗಳನ್ನು ಹರಿದು, ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನತೆಯಿಂದ ನಡೆದನು.</verse>
				<verse number="28">ಆಗ ಯೆಹೋವ ದೇವರ ವಾಕ್ಯವು ತಿಷ್ಬೀಯನಾದ ಎಲೀಯನಿಗೆ ಉಂಟಾಗಿ,</verse>
				<verse number="29">“ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ಜೀವಮಾನದಲ್ಲಿ ಆ ಕೇಡನ್ನು ಬರಮಾಡದೆ, ಅವನ ಮಗನ ಕಾಲದಲ್ಲಿ ಅವನ ಮನೆಯ ಮೇಲೆ ಬರಮಾಡುವೆನು,” ಎಂದನು.</verse>
			</chapter>
			<chapter number="22">
				<verse number="1">ಅರಾಮ್ಯರಿಗೂ, ಇಸ್ರಾಯೇಲರಿಗೂ ಮೂರು ವರ್ಷ ಯುದ್ಧ ನಡೆಯಲಿಲ್ಲ.</verse>
				<verse number="2">ಮೂರನೆಯ ವರ್ಷದಲ್ಲಿ, ಯೆಹೂದದ ಅರಸನಾದ ಯೆಹೋಷಾಫಾಟನು ಇಸ್ರಾಯೇಲಿನ ಅರಸನ ಬಳಿಗೆ ಬಂದನು.</verse>
				<verse number="3">ಇಸ್ರಾಯೇಲಿನ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ನಮ್ಮದೆಂದು ನಿಮಗೆ ಗೊತ್ತುಂಟಲ್ಲಾ? ನಾವು ಅದನ್ನು ಅರಾಮಿನ ಅರಸನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಇದ್ದೇವೆ,” ಎಂದನು.</verse>
				<verse number="4">ಆಗ ಅವನು ಯೆಹೋಷಾಫಾಟನಿಗೆ, “ನೀನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ?” ಎಂದನು. ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದನು.</verse>
				<verse number="5">ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ಈ ಹೊತ್ತು ಮೊದಲು ಯೆಹೋವ ದೇವರ ಆಲೋಚನೆಯನ್ನು ವಿಚಾರಿಸಿರಿ,” ಎಂದನು.</verse>
				<verse number="6">ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, ಅವರಿಗೆ, “ನಾನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ, ಬೇಡವೋ?” ಎಂದು ಕೇಳಿದನು. ಅದಕ್ಕವರು, “ಹೋಗು, ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು.</verse>
				<verse number="7">ಆದರೆ ಯೆಹೋಷಾಫಾಟನು, “ಯೆಹೋವ ದೇವರ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಬೇರೆ ಪ್ರವಾದಿ ಇಲ್ಲಿ ಇಲ್ಲವೋ?” ಎಂದು ಕೇಳಿದನು.</verse>
				<verse number="8">ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು.</verse>
				<verse number="9">ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು, “ಇಮ್ಲನ ಮಗನಾದ ಮೀಕಾಯನನ್ನು ಶೀಘ್ರವಾಗಿ ಕರೆದುಕೊಂಡು ಬಾ,” ಎಂದನು.</verse>
				<verse number="10">ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ, ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯದ ಬಾಗಿಲಿನ ಮುಂದೆ ಬಯಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತುಕೊಂಡಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸುತ್ತಿದ್ದರು.</verse>
				<verse number="11">ಆಗ ಕೆನಾನನ ಮಗನಾದ ಚಿದ್ಕೀಯನು, “ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು, ‘ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.</verse>
				<verse number="12">ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ, “ಗಿಲ್ಯಾದಿನ ರಾಮೋತಿಗೆ ಹೋಗಿ ಜಯ ಹೊಂದು, ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು.</verse>
				<verse number="13">ಆದರೆ ಮೀಕಾಯನನ್ನು ಕರೆಯಲು ಹೋದ ದೂತನು ಅವನಿಗೆ, “ನೋಡು, ಎಲ್ಲ ಪ್ರವಾದಿಗಳು ಏಕಮನಸ್ಸಿನಿಂದ ಅರಸನಿಗೆ ಒಳ್ಳೆಯದನ್ನೇ ಪ್ರವಾದಿಸಿದ್ದಾರೆ. ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೆಯ ಮಾತು ಆಡು,” ಎಂದನು.</verse>
				<verse number="14">ಅದಕ್ಕೆ ಮೀಕಾಯನು, “ಯೆಹೋವ ದೇವರ ಜೀವದಾಣೆ, ಯೆಹೋವ ದೇವರು ನನಗೆ ಏನು ಹೇಳುವರೋ, ಅದನ್ನೇ ಮಾತನಾಡುವೆನು,” ಎಂದನು.</verse>
				<verse number="15">ಅವನು ಅರಸನ ಬಳಿಗೆ ಬಂದಾಗ ಅರಸನು ಅವನಿಗೆ, “ಮೀಕಾಯೆಹುವೇ, ನಾವು ಗಿಲ್ಯಾದಿನ ರಾಮೋತ್ ವಿರುದ್ಧವಾಗಿ ಯುದ್ಧಕ್ಕೆ ಹೋಗಬಹುದೋ ಅಥವಾ ಬೇಡವೋ?” ಎಂದನು. ಆಗ ಅವನು, “ಹೋಗಿ ಜಯ ಹೊಂದಿರಿ. ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದನು.</verse>
				<verse number="16">ಆಗ ಅರಸನು ಅವನಿಗೆ, “ನೀನು ಯೆಹೋವ ದೇವರ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು?” ಎಂದನು.</verse>
				<verse number="17">ಅದಕ್ಕೆ ಮೀಕಾಯನು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳ ಮೇಲೆ ಚದರಿಹೋದದ್ದನ್ನು ಕಂಡೆನು. ಆಗ ಯೆಹೋವ ದೇವರು, ‘ಇವರಿಗೆ ಯಜಮಾನನು ಇಲ್ಲ, ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂದಿರುಗಿ ಹೋಗಲಿ,’ ಎಂಬುದಾಗಿ ಹೇಳಿದರು,” ಎಂದನು.</verse>
				<verse number="18">ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ಇವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ, ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ?” ಎಂದನು.</verse>
				<verse number="19">ಆಗ ಮೀಕಾಯನು, “ಆದ್ದರಿಂದ ಯೆಹೋವ ದೇವರ ವಾಕ್ಯವನ್ನು ಕೇಳು: ಯೆಹೋವ ದೇವರು ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡಿರುವುದನ್ನೂ ಆಕಾಶದ ಸಮಸ್ತ ಸೈನ್ಯವು ಅವರ ಬಲಗಡೆ, ಎಡಗಡೆ ಮತ್ತು ಸುತ್ತಲೂ ನಿಂತಿರುವುದನ್ನೂ ನಾನು ಕಂಡೆನು.</verse>
				<verse number="20">ಆಗ ಯೆಹೋವ ದೇವರು, ‘ಅಹಾಬನು ಹೋಗಿ ಗಿಲ್ಯಾದಿನ ರಾಮೋತಿನಲ್ಲಿ ಬೀಳುವ ಹಾಗೆ, ಅವನನ್ನು ಮರುಳುಗೊಳಿಸುವವನು ಯಾರು?’ ಎಂದರು. “ಒಬ್ಬನು ಒಂದು ವಿಧವಾಗಿಯೂ ಮತ್ತೊಬ್ಬನು ಇನ್ನೊಂದು ವಿಧವಾಗಿಯೂ ಹೇಳುತ್ತಿದ್ದರು.</verse>
				<verse number="21">ಕೊನೆಯಲ್ಲಿ, ಒಂದು ಆತ್ಮವು ಹೊರಟುಬಂದು ಯೆಹೋವ ದೇವರ ಮುಂದೆ ನಿಂತು, ‘ನಾನು ಅವನನ್ನು ಮರುಳುಗೊಳಿಸುತ್ತೇನೆ,’ ಎಂದಿತು.</verse>
				<verse number="22">“ಆಗ ಯೆಹೋವ ದೇವರು, ‘ಅದು ಹೇಗೆ?’ ಎಂದರು. “ಅದಕ್ಕದು, ‘ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳನ್ನಾಡುವ ಆತ್ಮವಾಗಿರುವೆನು,’ ಎಂದಿತು. “ಅದಕ್ಕೆ ಅವರು, ‘ನೀನು ಅವನನ್ನು ಮರುಳುಗೊಳಿಸುವೆ ಮತ್ತು ಜಯಿಸುವೆ. ಹೊರಟುಹೋಗಿ ಹಾಗೆ ಮಾಡು,’ ಎಂದರು.</verse>
				<verse number="23">“ಆದ್ದರಿಂದ ಇಗೋ, ಯೆಹೋವ ದೇವರು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳನ್ನಾಡುವ ಆತ್ಮವನ್ನು ಇಟ್ಟಿದ್ದಾರೆ. ಇದಲ್ಲದೆ ಯೆಹೋವ ದೇವರು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾರೆ,” ಎಂದನು.</verse>
				<verse number="24">ಆಗ ಕೆನಾನನ ಮಗನಾದ ಚಿದ್ಕೀಯನು ಸಮೀಪಕ್ಕೆ ಬಂದು, ಮೀಕಾಯನ ಕೆನ್ನೆಯ ಮೇಲೆ ಹೊಡೆದು, “ಯೆಹೋವ ದೇವರ ಆತ್ಮವು ನನ್ನನ್ನು ಬಿಟ್ಟು, ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಬಂದಿತು?” ಎಂದನು.</verse>
				<verse number="25">ಅದಕ್ಕೆ ಮೀಕಾಯನು, “ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ನೀನು ಹೋಗುವ ದಿವಸದಲ್ಲಿ ನೋಡುವೆ,” ಎಂದನು.</verse>
				<verse number="26">ಆಗ ಇಸ್ರಾಯೇಲಿನ ಅರಸನು ಹೇಳಿದ್ದೇನೆಂದರೆ, “ನೀವು ಮೀಕಾಯನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ, ಅರಸನ ಮಗನಾದ ಯೋವಾಷನ ಬಳಿಗೂ ತೆಗೆದುಕೊಂಡುಹೋಗಿ,</verse>
				<verse number="27">‘ನಾನು ಸಮಾಧಾನವಾಗಿ ತಿರುಗಿ ಬರುವವರೆಗೂ ನೀವು ಇವನನ್ನು ಸೆರೆಮನೆಯಲ್ಲಿಟ್ಟು, ಅವನಿಗೆ ರೊಟ್ಟಿ ಮತ್ತು ನೀರನ್ನು ಬಿಟ್ಟು ಮತ್ತೇನೂ ಕೊಡಬೇಡಿರೆಂದು ಅರಸನು ಹೇಳಿದ್ದಾನೆ,’ ಎಂದು ತಿಳಿಸು,” ಎಂದನು.</verse>
				<verse number="28">ಅದಕ್ಕೆ ಮೀಕಾಯನು, “ನೀನು ಸಮಾಧಾನದಿಂದ ನಿಜವಾಗಿ ಬಂದರೆ, ಯೆಹೋವ ದೇವರು ನನ್ನ ಮುಖಾಂತರ ಮಾತನಾಡಿಲ್ಲ, ಎಂದು ಹೇಳಿ; ಜನರೇ ನೀವೆಲ್ಲರೂ ನನ್ನ ಮಾತನ್ನು ಗಮನದಲ್ಲಿಡಿರಿ!” ಎಂದು ಕೂಗಿ ಹೇಳಿದನು.</verse>
				<verse number="29">ಹೀಗೆಯೇ ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು.</verse>
				<verse number="30">ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ಯುದ್ಧದಲ್ಲಿ ಪ್ರವೇಶಿಸುವೆನು. ಆದರೆ ನೀನು ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡಿರು,” ಎಂದನು. ಹಾಗೆಯೇ ಇಸ್ರಾಯೇಲಿನ ಅರಸನು ವೇಷಹಾಕಿಕೊಂಡು ಯುದ್ಧಕ್ಕೆ ಹೋದನು.</verse>
				<verse number="31">ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೆರಡು ಮಂದಿ ಪ್ರಧಾನರಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲಿನ ಅರಸನನ್ನು ಮಾತ್ರ ಗುರಿಯಾಗಿಸಿಕೊಂಡು ಯುದ್ಧಮಾಡಿರಿ,” ಎಂದು ಆಜ್ಞಾಪಿಸಿದನು.</verse>
				<verse number="32">ಆದ್ದರಿಂದ ರಥಗಳ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ, “ನಿಶ್ಚಯವಾಗಿ ಇವನೇ ಇಸ್ರಾಯೇಲಿನ ಅರಸನು,” ಎಂದು ಹೇಳಿ, ಅವನ ಸಂಗಡ ಯುದ್ಧಮಾಡುವುದಕ್ಕೆ ತಿರುಗಿಕೊಂಡರು. ಆಗ ಯೆಹೋಷಾಫಾಟನು ಕೂಗಿಕೊಂಡನು.</verse>
				<verse number="33">ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳಿಗೆ ಗೊತ್ತಾದಾಗ, ಅವರು ಅವನನ್ನು ಬಿಟ್ಟುಹೋದರು.</verse>
				<verse number="34">ಆದರೆ ಅರಾಮ್ಯರ ಸೈನಿಕನೊಬ್ಬನು ಗುರಿ ಇಡದೆ ಬಿಲ್ಲಿಗೆ ಬಾಣವನ್ನೇರಿಸಿ ಹೊಡೆಯಲು, ಅದು ಇಸ್ರಾಯೇಲಿನ ಅರಸನಿಗೆ, ಅವನ ಕವಚದ ಸಂದಿನಲ್ಲಿ ಬಂದು ತಾಕಿತು. ಆದ್ದರಿಂದ ಅವನು ತನ್ನ ರಥ ನಡೆಸುವವನಿಗೆ, “ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆಗೆ ತೆಗೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ,” ಎಂದನು.</verse>
				<verse number="35">ಆ ದಿವಸವೆಲ್ಲಾ ಯುದ್ಧವು ಬಹು ಘೋರವಾದದ್ದರಿಂದ ಇಸ್ರಾಯೇಲಿನ ಅರಸನು ಅರಾಮ್ಯರಿಗೆ ಎದುರಾಗಿ ರಥದಲ್ಲಿಯೇ ಆತುಕೊಂಡು ನಿಂತಿದ್ದನು. ಅವನ ಗಾಯದ ರಕ್ತವು ರಥದ ಅಡಿಭಾಗದಲ್ಲಿ ಸುರಿದು ನಿಂತಿತ್ತು, ಸಾಯಂಕಾಲದಲ್ಲಿ ಅವನು ಮರಣಹೊಂದಿದನು.</verse>
				<verse number="36">ಸಾಯಂಕಾಲವಾದಾಗ, “ಪ್ರತಿ ಮನುಷ್ಯನು ತನ್ನ ತನ್ನ ಪಟ್ಟಣಕ್ಕೂ, ಪ್ರತಿ ಮನುಷ್ಯನು ತನ್ನ ತನ್ನ ದೇಶಕ್ಕೂ ಹೋಗಲಿ,” ಎಂದು ಸೈನ್ಯದಲ್ಲಿ ಪ್ರಕಟಮಾಡಲಾಯಿತು.</verse>
				<verse number="37">ಇಸ್ರಾಯೇಲಿನ ಅರಸನ ಶವವನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿಮಾಡಿದರು.</verse>
				<verse number="38">ಆ ರಥವನ್ನು ವೇಶ್ಯೆಯರು ಸ್ನಾನ ಮಾಡುವ ಸಮಾರ್ಯದ ಕೆರೆಯಲ್ಲಿ ತೊಳೆಯುತ್ತಿದ್ದಾಗ, ಯೆಹೋವ ದೇವರು ಹೇಳಿದ ವಾಕ್ಯದ ಪ್ರಕಾರವೇ ನಾಯಿಗಳು ಅವನ ರಕ್ತವನ್ನು ನೆಕ್ಕಿದವು.</verse>
				<verse number="39">ಅಹಾಬನ ಇತರ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ, ಅವನು ಕಟ್ಟಿಸಿದ ದಂತದ ಮನೆಯೂ, ಅವನು ಕಟ್ಟಿಸಿದ ಎಲ್ಲಾ ಪಟ್ಟಣಗಳೂ ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="40">ಅಹಾಬನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಮಗ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು.</verse>
				<verse number="41">ಇಸ್ರಾಯೇಲರ ಅರಸ ಅಹಾಬನ ನಾಲ್ಕನೆಯ ವರ್ಷದಲ್ಲಿ ಆಸನ ಮಗ ಯೆಹೋಷಾಫಾಟನು ಯೆಹೂದ್ಯರ ಅರಸನಾದನು.</verse>
				<verse number="42">ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿದ್ದನು. ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ.</verse>
				<verse number="43">ಅವನು ತನ್ನ ತಂದೆ ಆಸನ ಮಾರ್ಗಗಳಲ್ಲಿ ನಡೆದು, ಅದನ್ನು ಬಿಟ್ಟು ತೊಲಗದೇ, ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು. ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.</verse>
				<verse number="44">ಯೆಹೋಷಾಫಾಟನು ಇಸ್ರಾಯೇಲಿನ ಅರಸನ ಸಂಗಡ ಸಮಾಧಾನ ಮಾಡಿಕೊಂಡನು.</verse>
				<verse number="45">ಯೆಹೋಷಾಫಾಟನ ಇತರ ಕ್ರಿಯೆಗಳೂ, ಅವನು ತೋರಿಸಿದ ಪರಾಕ್ರಮವೂ, ಅವನು ಯುದ್ಧ ಮಾಡಿದ ವಿಧವೂ, ಯೆಹೂದದ ಅರಸುಗಳ ಇತಿಹಾಸಗಳ ಗ್ರಂಥದಲ್ಲಿ ಬರೆದಿರುತ್ತವೆ.</verse>
				<verse number="46">ಅವನ ತಂದೆ ಆಸನ ಕಾಲದಲ್ಲಿ ಉಳಿದಿದ್ದ ಪುರುಷಗಾಮಿಗಳನ್ನು ಅವನು ದೇಶದಿಂದ ತೆಗೆದುಹಾಕಿದನು.</verse>
				<verse number="47">ಆ ಕಾಲದಲ್ಲಿ ಎದೋಮಿನೊಳಗೆ ಅರಸನಿರಲಿಲ್ಲ, ಅಧಿಪತಿಯು ಆಳುತ್ತಿದ್ದನು.</verse>
				<verse number="48">ಯೆಹೋಷಾಫಾಟನು ಬಂಗಾರಕ್ಕೋಸ್ಕರ ಓಫೀರಿಗೆ ಹೋಗುವುದಕ್ಕೆ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು. ಆದರೆ ಅವು ಹೋಗಲಿಲ್ಲ. ಆ ಹಡಗುಗಳು ಎಚ್ಯೋನ್ ಗೆಬೆರಿನ ಬಳಿಯಲ್ಲಿ ಒಡೆದುಹೋದವು.</verse>
				<verse number="49">ಆಗ ಅಹಾಬನ ಮಗ ಅಹಜ್ಯನು ಯೆಹೋಷಾಫಾಟನಿಗೆ, “ನನ್ನ ಸೇವಕರು, ನಿನ್ನ ಸೇವಕರ ಸಂಗಡ ಹಡಗುಗಳಲ್ಲಿ ಹೋಗಲಿ,” ಎಂದನು. ಆದರೆ ಯೆಹೋಷಾಫಾಟನು ಸಮ್ಮತಿಸಲಿಲ್ಲ.</verse>
				<verse number="50">ಯೆಹೋಷಾಫಾಟನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಪೂರ್ವಜರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಆಗ ಅವನಿಗೆ ಬದಲಾಗಿ ಅವನ ಮಗನಾದ ಯೆಹೋರಾಮನು ಅರಸನಾದನು.</verse>
				<verse number="51">ಅಹಾಬನ ಮಗ ಅಹಜ್ಯನು ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೇಳನೆಯ ವರ್ಷದಲ್ಲಿ ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಲಾರಂಭಿಸಿ, ಎರಡು ವರ್ಷ ಇಸ್ರಾಯೇಲನ್ನು ಆಳಿದನು.</verse>
				<verse number="52">ಆದರೆ ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ತನ್ನ ತಂದೆಯ ಮಾರ್ಗದಲ್ಲಿಯೂ, ತನ್ನ ತಾಯಿಯ ಮಾರ್ಗದಲ್ಲಿಯೂ ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗದಲ್ಲಿಯೂ ನಡೆದನು.</verse>
				<verse number="53">ಅವನು ಬಾಳನನ್ನು ಸೇವಿಸಿ, ಅದಕ್ಕೆ ಅಡ್ಡಬಿದ್ದು, ತನ್ನ ತಂದೆಯು ಮಾಡಿದ ಎಲ್ಲಾದರ ಪ್ರಕಾರವೇ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಕೋಪ ಬರುವಂತೆ ಮಾಡಿದನು.</verse>
			</chapter>
		</book>
		<book number="12">
			<chapter number="1">
				<verse number="1">ಅಹಾಬನ ಮರಣದ ನಂತರ ಮೋವಾಬ್ಯರು ಇಸ್ರಾಯೇಲರ ವಿರುದ್ಧ ದಂಗೆ ಎದ್ದರು.</verse>
				<verse number="2">ಅಹಜ್ಯನು ಸಮಾರ್ಯದಲ್ಲಿದ್ದ ತನ್ನ ಮೇಲುಪ್ಪರಿಗೆಯ ಕಿಟಕಿಯೊಂದರಿಂದ ಬಿದ್ದು ಅಸ್ವಸ್ಥನಾಗಿದ್ದನು. ಅವನು ತನ್ನ ಸೇವಕರನ್ನು ಕರೆದು, “ಎಕ್ರೋನಿನ ದೇವರಾದ ‘ಬಾಳ್ ಜೆಬೂಬನ’ ಸನ್ನಿಧಿಗೆ ಹೋಗಿ, ನಾನು ಈ ಅಸ್ವಸ್ಥತೆಯಿಂದ ಗುಣವಾಗುವೆನೋ ಇಲ್ಲವೋ? ಎಂದು ವಿಚಾರಿಸಿ ಬನ್ನಿ,” ಎಂದು ಹೇಳಿ ಕಳುಹಿಸಿದನು.</verse>
				<verse number="3">ಆದರೆ ಯೆಹೋವ ದೇವರ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನೆದ್ದು ಸಮಾರ್ಯದ ಅರಸನ ಸೇವಕರಿಗೆ ಎದುರಾಗಿ ಹೋಗಿ ಅವರಿಗೆ, ‘ಇಸ್ರಾಯೇಲಿನಲ್ಲಿ ದೇವರು ಇಲ್ಲವೆ? ನೀವು ಎಕ್ರೋನಿನ ದೇವರಾದ ಬಾಳ್ ಜೆಬೂಬನನ್ನು ವಿಚಾರಿಸಲು ಹೋಗುತ್ತಿರುವುದೇಕೆ?</verse>
				<verse number="4">ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ, ನಿಶ್ಚಯವಾಗಿ ಸಾಯುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ ಎಂದು ಹೇಳು,” ಎಂದರು. ಆಗ ಎಲೀಯನು ಹೊರಟುಹೋಗಿ ಅದರಂತೆ ಹೇಳಿದನು.</verse>
				<verse number="5">ಸೇವಕರು ಅರಸನ ಬಳಿಗೆ ಹಿಂದಿರುಗಿ ಬಂದಾಗ, ಅವನು ಅವರಿಗೆ, “ನೀವು ಹಿಂದಿರುಗಿ ಬಂದದ್ದೇಕೆ?” ಎಂದನು.</verse>
				<verse number="6">ಅವರು ಅರಸನಿಗೆ, “ಒಬ್ಬ ಮನುಷ್ಯನು ನಮಗೆ ಎದುರಾಗಿ ಬಂದು, ‘ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹಿಂದಿರುಗಿ ಹೋಗಿ, ಯೆಹೋವ ದೇವರು ಹೇಳುವುದು ಏನೆಂದರೆ: ಇಸ್ರಾಯೇಲಿನಲ್ಲಿ ದೇವರು ಇಲ್ಲವೆ? ನೀನು ಎಕ್ರೋನಿನ ದೇವರಾದ ಬಾಳ್ ಜೆಬೂಬನನ್ನು ವಿಚಾರಿಸಲು ಜನರನ್ನು ಕಳುಹಿಸಿರುತ್ತೀ? ಇದರ ನಿಮಿತ್ತ, ನೀನು ಏರಿದ ಮಂಚದಿಂದ ಇಳಿಯದೆ, ನಿಶ್ಚಯವಾಗಿ ಸಾಯುವೆ,’ ಎಂಬುದಾಗಿ ಅವನಿಗೆ ಹೇಳಿರಿ, ಎಂದು ತಿಳಿಸಿದನು,” ಎಂದರು.</verse>
				<verse number="7">ಅರಸನು ಅವರಿಗೆ, “ನಿಮಗೆದುರಾಗಿ ಬಂದು ಈ ಮಾತುಗಳನ್ನು ನಿಮಗೆ ಹೇಳಿದ ಆ ಮನುಷ್ಯನು ಹೇಗಿದ್ದನು?” ಎಂದು ಕೇಳಿದನು.</verse>
				<verse number="8">ಅದಕ್ಕವರು, “ಅವನು ಕಂಬಳಿಯನ್ನು ಹೊದ್ದುಕೊಂಡಿದ್ದನು; ಅವನ ಸೊಂಟಕ್ಕೆ ಸುತ್ತಲೂ ತೊಗಲಿನ ನಡುಕಟ್ಟು ಇತ್ತು,” ಎಂದರು. ಆಗ ಅರಸನು, “ಅವನು ತಿಷ್ಬೀಯನಾದ ಎಲೀಯನೇ ಆಗಿರಬೇಕು,” ಎಂದು ಹೇಳಿದನು.</verse>
				<verse number="9">ಆಗ ಅರಸನು ಒಬ್ಬ ಪ್ರಧಾನನನ್ನು, ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಎಲೀಯನ ಬಳಿಗೆ ಕಳುಹಿಸಿದನು. ಪ್ರಧಾನನು ಅವನ ಬಳಿಗೆ ಹೋದಾಗ, ಇಗೋ, ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿದ್ದನು. ಆಗ ಅವನು ಎಲೀಯನಿಗೆ, “ದೇವರ ಮನುಷ್ಯನೇ, ‘ಇಳಿದು ಬಾ,’ ಎಂದು ಅರಸನು ಹೇಳುತ್ತಾನೆ,” ಎಂದನು.</verse>
				<verse number="10">ಅದಕ್ಕೆ ಎಲೀಯನು ಪ್ರಧಾನನಿಗೆ ಉತ್ತರವಾಗಿ, “ನಾನು ದೇವರ ಮನುಷ್ಯನಾಗಿದ್ದರೆ, ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ,” ಎಂದನು. ಆಗ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು.</verse>
				<verse number="11">ತಿರುಗಿ ಅರಸನು ಎಲೀಯನ ಬಳಿಗೆ ಐವತ್ತು ಮಂದಿಯ ಪ್ರಧಾನನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಅವನು ಬಂದು ಇವನಿಗೆ, “ದೇವರ ಮನುಷ್ಯನೇ, ‘ಬೇಗನೆ ಇಳಿದು ಬಾ,’ ಎಂದು ಅರಸನು ಹೇಳುತ್ತಾನೆ,” ಎಂದನು.</verse>
				<verse number="12">ಎಲೀಯನು ಅವರಿಗೆ ಉತ್ತರವಾಗಿ, “ನಾನು ದೇವರ ಮನುಷ್ಯನಾಗಿದ್ದರೆ, ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ,” ಎಂದನು. ಆಗ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು.</verse>
				<verse number="13">ತಿರುಗಿ ಅರಸನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವನನ್ನೂ, ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಈ ಐವತ್ತು ಮಂದಿಗೆ ಪ್ರಧಾನನಾದ ಮೂರನೆಯವನು ಬಂದು ಎಲೀಯನ ಮುಂದೆ ತನ್ನ ಮೊಣಕಾಲೂರಿಕೊಂಡು ಅವನಿಗೆ, “ದೇವರ ಮನುಷ್ಯನೇ, ನೀನು ದಯಮಾಡು, ನನ್ನ ಪ್ರಾಣವೂ, ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಮೌಲ್ಯವುಳ್ಳದ್ದಾಗಿರಲಿ.</verse>
				<verse number="14">ಇಗೋ, ಬೆಂಕಿಯು ಆಕಾಶದಿಂದ ಇಳಿದು ಮೊದಲಿನ ಇಬ್ಬರು ಪ್ರಧಾನರನ್ನೂ, ಅವರ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು. ಆದರೆ ಈಗ ನನ್ನ ಪ್ರಾಣವು ನಿನ್ನ ಸಮ್ಮುಖದಲ್ಲಿ ಮೌಲ್ಯವುಳ್ಳದ್ದಾಗಿರಲಿ,” ಎಂದು ಹೇಳಿ ಅವನನ್ನು ಬೇಡಿಕೊಂಡನು.</verse>
				<verse number="15">ಆಗ ಯೆಹೋವ ದೇವರ ದೂತನು ಎಲೀಯನಿಗೆ, “ಅವನ ಸಂಗಡ ಇಳಿದು ಹೋಗು, ಅವನಿಗೆ ಭಯಪಡಬೇಡ,” ಎಂದನು. ಆದ್ದರಿಂದ ಎಲೀಯನು ಎದ್ದು ಅವನ ಸಂಗಡ ಅರಸನ ಬಳಿಗೆ ಇಳಿದು ಹೋದನು.</verse>
				<verse number="16">ಅರಸನಿಗೆ, “ಯೆಹೋವ ದೇವರ ವಾಕ್ಯವನ್ನು ವಿಚಾರಿಸಲು ಇಸ್ರಾಯೇಲಿನಲ್ಲಿ ದೇವರಿಲ್ಲವೆಂಬ ಹಾಗೆ ನೀನು ಎಕ್ರೋನಿನ ದೇವರಾದ ಬಾಳ್ ಜೆಬೂಬನ್ನು ವಿಚಾರಿಸಲು ದೂತರನ್ನು ಕಳುಹಿಸಿದ ಕಾರಣ, ‘ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.</verse>
				<verse number="17">ಹಾಗೆಯೇ ಅವನು ಎಲೀಯನು ಹೇಳಿದ ಯೆಹೋವ ದೇವರ ವಾಕ್ಯದ ಪ್ರಕಾರವೇ ಸತ್ತುಹೋದನು. ಅಹಜ್ಯನಿಗೆ ಮಗನಿಲ್ಲದ್ದರಿಂದ ಯೆಹೂದದ ಅರಸನಾದ ಯೆಹೋಷಾಫಾಟನ ಮಗ ಯೆಹೋರಾಮನ ಎರಡನೆಯ ವರ್ಷದಲ್ಲಿ ಯೋರಾಮನು ಅವನಿಗೆ ಬದಲಾಗಿ ಅರಸನಾದನು.</verse>
				<verse number="18">ಅಹಜ್ಯನು ಮಾಡಿದ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
			</chapter>
			<chapter number="2">
				<verse number="1">ಯೆಹೋವ ದೇವರು ಎಲೀಯನನ್ನು ಬಿರುಗಾಳಿಯಿಂದ ಆಕಾಶಕ್ಕೆ ಎತ್ತಿಕೊಳ್ಳುವಾಗ, ಎಲೀಯನು ಎಲೀಷನ ಸಂಗಡ ಗಿಲ್ಗಾಲಿನಿಂದ ಹೋಗುತ್ತಾ ಇದ್ದನು.</verse>
				<verse number="2">ಆಗ ಎಲೀಯನು ಎಲೀಷನಿಗೆ, “ನೀನು ದಯಮಾಡಿ ಇಲ್ಲಿ ಇರು. ಯೆಹೋವ ದೇವರು ನನ್ನನ್ನು ಬೇತೇಲಿಗೆ ಕಳುಹಿಸುತ್ತಿದ್ದಾರೆ,” ಎಂದನು. ಅದಕ್ಕೆ ಎಲೀಷನು, “ಯೆಹೋವ ದೇವರ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದನು. ಹಾಗೆಯೇ ಅವರು ಬೇತೇಲಿಗೆ ಹೋದರು.</verse>
				<verse number="3">ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಇಂದು ಯೆಹೋವ ದೇವರು ನಿನ್ನ ಯಜಮಾನನನ್ನು ನಿನ್ನಿಂದ ತೆಗೆದುಕೊಳ್ಳುವರೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ಹೌದು, ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು.</verse>
				<verse number="4">ಆಗ ಎಲೀಯನು ಅವನಿಗೆ, “ಎಲೀಷನೇ, ನೀನು ದಯಮಾಡಿ ಇಲ್ಲೇ ಇರು. ಯೆಹೋವ ದೇವರು ನನ್ನನ್ನು ಯೆರಿಕೋವಿಗೆ ಕಳುಹಿಸುತ್ತಿದ್ದಾರೆ” ಎಂದನು. ಅದಕ್ಕವನು, “ಯೆಹೋವ ದೇವರ ಜೀವದಾಣೆ, ನನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದನು. ಹಾಗೆಯೇ ಅವರು ಯೆರಿಕೋವಿಗೆ ಬಂದರು.</verse>
				<verse number="5">ಆಗ ಯೆರಿಕೋವಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತೆಗೆದುಕೊಳ್ಳುವನೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು.</verse>
				<verse number="6">ಎಲೀಯನು ಅವನಿಗೆ, “ನೀನು ದಯಮಾಡಿ ಇಲ್ಲೇ ಇರು. ಯೆಹೋವ ದೇವರು ನನ್ನನ್ನು ಯೊರ್ದನಿಗೆ ಕಳುಹಿಸುತ್ತಿದ್ದಾರೆ,” ಎಂದನು. ಅದಕ್ಕವನು, “ಯೆಹೋವ ದೇವರ ಜೀವದಾಣೆ, ನನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದನು. ಹಾಗೆಯೇ ಅವರಿಬ್ಬರೂ ಮುಂದಕ್ಕೆ ನಡೆದರು.</verse>
				<verse number="7">ಪ್ರವಾದಿಗಳ ಗುಂಪಿನಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನ್ ನದಿ ಬಳಿಯಲ್ಲಿ ನಿಂತರು.</verse>
				<verse number="8">ಆದರೆ ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಿಸಿಕೊಂಡು, ನೀರನ್ನು ಹೊಡೆದನು. ಆಗ ಆ ನೀರು ಈ ಕಡೆ, ಆ ಕಡೆ ವಿಭಾಗವಾದುದರಿಂದ ಅವರಿಬ್ಬರೂ ಒಣಭೂಮಿಯ ಮೇಲೆ ದಾಟಿಹೋದರು.</verse>
				<verse number="9">ಅವರು ದಾಟಿಹೋದ ತರುವಾಯ, ಎಲೀಯನು ಎಲೀಷನಿಗೆ, “ನಾನು ನಿನ್ನನ್ನು ಬಿಟ್ಟುಹೋಗುವುದಕ್ಕೆ ಮುಂಚೆ, ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು,” ಎಂದನು. ಅದಕ್ಕೆ ಎಲೀಷನು, “ನಿನ್ನ ಆತ್ಮದ ಎರಡು ಪಾಲನ್ನು ನಾನು ಬಾಧ್ಯವಾಗಿ ಹೊಂದುವಂತೆ ಮಾಡು,” ಎಂದನು.</verse>
				<verse number="10">ಅದಕ್ಕವನು, “ನೀನು ಕಠಿಣವಾದದ್ದನ್ನು ಕೇಳಿದೆ. ಆದಾಗ್ಯೂ ನಿನ್ನ ಬಳಿಯಿಂದ ತೆಗೆಯಲಾಗುವಾಗ ನೀನು ನನ್ನನ್ನು ಕಂಡರೆ, ನಿನಗೆ ಅದು ದೊರಕುವುದು, ಇಲ್ಲದಿದ್ದರೆ, ದೊರಕುವುದಿಲ್ಲ,” ಎಂದನು.</verse>
				<verse number="11">ಅವರು ನಡೆಯುತ್ತಾ ಬಂದು ಮಾತನಾಡಿಕೊಂಡಿರುವಾಗ, ಬೆಂಕಿಯ ರಥವೂ ಬೆಂಕಿಯ ಕುದುರೆಗಳೂ ಅವರಿಬ್ಬರನ್ನೂ ಬೇರೆಯಾಗಿ ಮಾಡಿದವು. ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.</verse>
				<verse number="12">ಎಲೀಷನು ಅದನ್ನು ಕಂಡು, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥ ಮತ್ತು ಸಾರಥಿಯಾದ್ದಾತನೇ!” ಎಂದು ಕೂಗಿದನು. ಮತ್ತೆ ಅವನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡುತುಂಡಾಗಿ ಹರಿದನು.</verse>
				<verse number="13">ಎಲೀಷನು ಎಲೀಯನಿಂದ ಬಿದ್ದ ಹೊದಿಕೆಯನ್ನು ಎತ್ತಿಕೊಂಡು, ಹಿಂದಕ್ಕೆ ಹೋಗಿ, ಯೊರ್ದನ್ ನದಿ ತೀರದಲ್ಲಿ ನಿಂತನು.</verse>
				<verse number="14">ಎಲೀಯನಿಂದ ಬಿದ್ದ ಹೊದಿಕೆಯನ್ನು ತೆಗೆದುಕೊಂಡು ನೀರನ್ನು ಹೊಡೆದು, “ಎಲೀಯನ ದೇವರಾದ ಯೆಹೋವ ದೇವರು ಎಲ್ಲಿ?” ಎಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ, ಅದು ಬಲಗಡೆಗೂ ಎಡಗಡೆಗೂ ವಿಭಾಗವಾದದ್ದರಿಂದ, ಎಲೀಷನು ದಾಟಿಹೋದನು.</verse>
				<verse number="15">ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಗುಂಪು ಅವನನ್ನು ಕಂಡಾಗ, “ಎಲೀಯನ ಆತ್ಮವು ಎಲೀಷನ ಮೇಲೆ ನಿಂತಿರುವುದು,” ಎಂದು ಹೇಳಿ, ಎದುರುಗೊಳ್ಳಲು ಬಂದು, ಅವನ ಮುಂದೆ ನೆಲದವರೆಗೂ ಅಡ್ಡಬಿದ್ದರು.</verse>
				<verse number="16">ಇದಲ್ಲದೆ ಅವರು ಅವನಿಗೆ, “ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ. ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಆಗಲಿ. ಒಂದು ವೇಳೆ ಯೆಹೋವ ದೇವರ ಆತ್ಮರು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ, ತಗ್ಗಿನಲ್ಲಾದರೂ ಇಟ್ಟಿರಬಹುದು,” ಎಂದರು. ಅದಕ್ಕೆ ಅವನು, “ಕಳುಹಿಸಬೇಡಿರಿ,” ಎಂದನು.</verse>
				<verse number="17">ಆದರೆ ಅವರು ಅವನನ್ನು ಬೇಸರಪಡುವವರೆಗೂ ಬಲವಂತ ಮಾಡಿದ್ದರಿಂದ ಅವನು, “ಕಳುಹಿಸಿರಿ,” ಎಂದನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿ ಅವನನ್ನು ಕಾಣದೆ ಹೋದರು.</verse>
				<verse number="18">ಅವನು ಯೆರಿಕೋವಿನಲ್ಲಿ ನಿಂತಿರುವಾಗ, ಅವರು ತಿರುಗಿ ಅವನ ಬಳಿಗೆ ಬಂದರು. ಆಗ ಅವನು ಅವರಿಗೆ, “ಹೋಗಬೇಡಿರೆಂದು ನಾನು ನಿಮಗೆ ಹೇಳಲಿಲ್ಲವೋ?” ಎಂದನು.</verse>
				<verse number="19">ಆಗ ಪಟ್ಟಣದ ಮನುಷ್ಯರು ಎಲೀಷನಿಗೆ, “ಈ ಪಟ್ಟಣದ ಸ್ಥಳವು ಒಳ್ಳೆಯದಾಗಿದೆ. ನಮ್ಮ ಯಜಮಾನನೇ, ನೋಡು ನಿನಗೆ ಕಾಣುವುದು. ಆದರೆ ನೋಡು ನೀರು ಕೆಟ್ಟದ್ದು, ಭೂಮಿ ಬಂಜೆಯಾದದ್ದು,” ಎಂದರು.</verse>
				<verse number="20">ಅದಕ್ಕವನು, “ನನ್ನ ಬಳಿಗೆ ಹೊಸ ಗಡಿಗೆಯನ್ನು ತೆಗೆದುಕೊಂಡು ಬಂದು ಅದರಲ್ಲಿ ಉಪ್ಪು ಹಾಕಿರಿ,” ಎಂದನು. ಅವರು ಅವನ ಬಳಿಗೆ ತೆಗೆದುಕೊಂಡು ಬಂದರು.</verse>
				<verse number="21">ಅವನು ನೀರಿನ ಬುಗ್ಗೆಯ ಬಳಿಗೆ ಹೊರಟುಹೋಗಿ, ನೀರಿನಲ್ಲಿ ಉಪ್ಪು ಹಾಕಿ, “ ‘ಆ ನೀರನ್ನು ಶುದ್ಧಮಾಡಿದೆನು. ಇನ್ನು ಮೇಲೆ ಅದರಿಂದ ಮರಣವೂ, ಬಂಜೆತನವೂ ಆಗದಿರಲಿ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.</verse>
				<verse number="22">ಎಲೀಷನು ಹೇಳಿದ ವಾಕ್ಯದ ಪ್ರಕಾರವೇ ಆ ನೀರು ಇಂದಿನವರೆಗೂ ಶುದ್ಧವಾಗಿಯೇ ಇದೆ.</verse>
				<verse number="23">ಅವನು ಆ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋದನು. ಅವನು ಮಾರ್ಗದಲ್ಲಿ ಏರಿ ಹೋಗುತ್ತಿರುವಾಗ, ಚಿಕ್ಕ ಹುಡುಗರು ಪಟ್ಟಣದಿಂದ ಹೊರಟುಬಂದು ಅವನನ್ನು ಹಾಸ್ಯಮಾಡಿ ಅವನಿಗೆ, “ಬೋಳು ತಲೆಯವನೇ, ಏರಿ ಹೋಗು; ಬೋಳು ತಲೆಯವನೇ, ಏರಿ ಹೋಗು,” ಎಂದರು.</verse>
				<verse number="24">ಅವನು ಹಿಂದಿರುಗಿ ಅವರನ್ನು ನೋಡಿ, ಯೆಹೋವ ದೇವರ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯಿಂದ ಎರಡು ಕರಡಿಗಳು ಹೊರಟು, ಅವರಲ್ಲಿ ನಾಲ್ವತ್ತೆರಡು ಹುಡುಗರನ್ನು ಸೀಳಿಬಿಟ್ಟವು.</verse>
				<verse number="25">ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲ್ ಬೆಟ್ಟಕ್ಕೆ ಹೋದನು. ಅಲ್ಲಿಂದ ಸಮಾರ್ಯಕ್ಕೆ ಇಳಿದು ಹೋದನು.</verse>
			</chapter>
			<chapter number="3">
				<verse number="1">ಯೆಹೂದದ ಅರಸನಾದ ಯೆಹೋಷಾಫಾಟನ ಹದಿನೆಂಟನೆಯ ವರ್ಷದಲ್ಲಿ, ಅಹಾಬನ ಮಗ ಯೋರಾಮನು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಲು ಆರಂಭಿಸಿ, ಹನ್ನೆರಡು ವರ್ಷ ಆಳಿದನು.</verse>
				<verse number="2">ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ತನ್ನ ತಂದೆಯಂತೆ, ತನ್ನ ತಾಯಿಯಂತೆ ಮಾಡಲಿಲ್ಲ. ತನ್ನ ತಂದೆಯು ಮಾಡಿಟ್ಟ ಬಾಳನ ಸ್ತಂಭವನ್ನು ತೆಗೆದುಹಾಕಿದನು.</verse>
				<verse number="3">ಆದರೂ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳಿಗೆ ಅವನು ಅಂಟಿಕೊಂಡು ಅವುಗಳನ್ನು ಬಿಟ್ಟು ತೊಲಗದೆ ಇದ್ದನು.</verse>
				<verse number="4">ಮೋವಾಬಿನ ಅರಸನಾದ ಮೇಷನು ಕುರಿ ಮಂದೆಯುಳ್ಳವನಾಗಿದ್ದು ಇಸ್ರಾಯೇಲಿನ ಅರಸನಿಗೆ ಒಂದು ಲಕ್ಷ ಕುರಿಮರಿಗಳನ್ನೂ, ಒಂದು ಲಕ್ಷ ಟಗರುಗಳ ಉಣ್ಣೆಯನ್ನೂ ಕಪ್ಪವಾಗಿ ಕೊಡುತ್ತಿದ್ದನು.</verse>
				<verse number="5">ಅಹಾಬನು ಮರಣ ಹೊಂದಿದ ತರುವಾಯ, ಮೋವಾಬಿನ ಅರಸನು ಇಸ್ರಾಯೇಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.</verse>
				<verse number="6">ಆ ದಿವಸದಲ್ಲಿ ಅರಸನಾದ ಯೋರಾಮನು ಸಮಾರ್ಯದಿಂದ ಹೊರಟುಹೋಗಿ ಇಸ್ರಾಯೇಲರನ್ನು ಕೂಡಿಸಿದನು.</verse>
				<verse number="7">ಇದಲ್ಲದೆ ಅವನು ಹೋಗಿ, “ಮೋವಾಬಿನ ಅರಸನು ನನಗೆ ವಿರೋಧವಾಗಿ ತಿರುಗಿಬಿದ್ದನು. ನೀನು ನನ್ನ ಸಂಗಡ ಮೋವಾಬಿನ ಮೇಲೆ ಯುದ್ಧಮಾಡಲು ಬರುವೆಯೋ?” ಎಂದು ಯೆಹೂದದ ಅರಸನಾದ ಯೆಹೋಷಾಫಾಟನಿಗೆ ಹೇಳಿ ಕಳುಹಿಸಿದನು. ಅದಕ್ಕವನು, “ನಾನು ಬರುವೆನು, ನಾನು ನಿನ್ನವನೇ, ನನ್ನ ಜನರು ನಿನ್ನ ಜನರೇ, ಹಾಗೆಯೇ ನನ್ನ ಕುದುರೆಗಳು ನಿನ್ನ ಕುದುರೆಗಳೇ,” ಎಂದನು.</verse>
				<verse number="8">ಯೋರಾಮನು, “ಯಾವ ಮಾರ್ಗವಾಗಿ ಹೋಗೋಣ?” ಎಂದು ಇವನು ಕೇಳಿದನು. ಯೆಹೋಷಾಫಾಟನು, “ಎದೋಮಿನ ಮರುಭೂಮಿಯ ಮಾರ್ಗವಾಗಿ,” ಎಂದನು.</verse>
				<verse number="9">ಹೀಗೆ ಇಸ್ರಾಯೇಲಿನ ಅರಸನು ಮತ್ತು ಯೆಹೂದದ ಅರಸನು, ಎದೋಮಿನ ಅರಸನೊಂದಿಗೆ ಹೊರಟು, ಸುತ್ತಾದ ಮಾರ್ಗದಲ್ಲಿ ಏಳು ದಿವಸ ನಡೆದರು. ಆದರೆ ಸೈನ್ಯಕ್ಕೂ, ಅವರು ತಂದಿದ್ದ ಪಶುಗಳಿಗೂ ನೀರು ಇಲ್ಲದೆ ಹೋಯಿತು.</verse>
				<verse number="10">ಆಗ ಇಸ್ರಾಯೇಲಿನ ಅರಸನು, “ಅಯ್ಯೋ, ಯೆಹೋವ ದೇವರು ಈ ಮೂರು ಮಂದಿ ಅರಸರನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿಕೊಡಲು ಕರೆದಿದ್ದಾರಲ್ಲಾ?” ಎಂದನು.</verse>
				<verse number="11">ಆದರೆ ಯೆಹೋಷಾಫಾಟನು ಪ್ರವಾದಿಯ ಮೂಲಕವಾಗಿ ಯೆಹೋವ ದೇವರನ್ನು ಕೇಳುವ ಹಾಗೆ, “ಇಲ್ಲಿ ಯೆಹೋವ ದೇವರ ಪ್ರವಾದಿಯು ಯಾವನೂ ಇಲ್ಲವೋ?” ಎಂದನು. ಆಗ ಇಸ್ರಾಯೇಲಿನ ಅರಸನ ಸೇವಕರಲ್ಲಿ ಒಬ್ಬನು ಉತ್ತರವಾಗಿ, “ಎಲೀಯನ ಕೈಗಳ ಮೇಲೆ ನೀರು ಹೊಯ್ಯುತ್ತಿದ್ದ ಶಾಫಾಟನ ಮಗ ಎಲೀಷನು ಇಲ್ಲಿದ್ದಾನೆ,” ಎಂದು ಹೇಳಿದನು.</verse>
				<verse number="12">ಆಗ ಯೆಹೋಷಾಫಾಟನು, “ಅವನ ಬಳಿಯಲ್ಲಿ ಯೆಹೋವ ದೇವರ ವಾಕ್ಯ ಇದೆ,” ಎಂದನು. ಇಸ್ರಾಯೇಲಿನ ಅರಸನೂ, ಯೆಹೋಷಾಫಾಟನೂ, ಎದೋಮಿನ ಅರಸನೂ ಅವನ ಬಳಿಗೆ ಇಳಿದು ಹೋದರು.</verse>
				<verse number="13">ಎಲೀಷನು ಇಸ್ರಾಯೇಲಿನ ಅರಸನಿಗೆ, “ನಿನ್ನೊಂದಿಗೆ ನಾನೇನು ಮಾಡಬೇಕು? ನೀನು ನಿನ್ನ ತಂದೆಯ ಪ್ರವಾದಿಗಳ ಬಳಿಗೂ, ನಿನ್ನ ತಾಯಿಯ ಪ್ರವಾದಿಗಳ ಬಳಿಗೂ ಹೋಗು,” ಎಂದನು. ಇಸ್ರಾಯೇಲಿನ ಅರಸನು ಅವನಿಗೆ, “ಇಲ್ಲ, ಯೆಹೋವ ದೇವರು ಈ ಮೂರು ಮಂದಿ ಅರಸರನ್ನು ಮೋವಾಬ್ಯರ ಕೈಯಲ್ಲಿ ಒಪ್ಪಿಸಿಕೊಡುವುದಕ್ಕೆ ಒಟ್ಟಾಗಿ ಕರೆದಿದ್ದಾರಲ್ಲಾ,” ಎಂದನು.</verse>
				<verse number="14">ಎಲೀಷನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸೇನಾಧೀಶ್ವರ ಯೆಹೋವ ದೇವರ ಆಣೆ, ನಿಶ್ಚಯವಾಗಿ ಯೆಹೂದದ ಅರಸನಾದ ಯೆಹೋಷಾಫಾಟನು ನಿನ್ನ ಜೊತೆಯಲ್ಲಿ ಬಂದಿರುವುದರಿಂದ ಗೌರವಿಸುತ್ತಿದ್ದೇನೆ; ಇಲ್ಲದಿದ್ದರೆ, ನಾನು ನಿನ್ನ ಕಡೆ ಸಹ ನೋಡುತ್ತಿರಲಿಲ್ಲ.</verse>
				<verse number="15">ಆದರೆ ಈಗ ವಾದ್ಯಗಾರನನ್ನು ನನ್ನ ಬಳಿಗೆ ಕರೆದುಕೊಂಡು ಬಾ,” ಎಂದನು. ಆ ವಾದ್ಯ ಬಾರಿಸುವವನು ಬಾರಿಸಿದಾಗ, ಯೆಹೋವ ದೇವರ ಕೈ ಎಲೀಷನ ಮೇಲೆ ಬಂತು.</verse>
				<verse number="16">ಆಗ ಅವನು, “ಈ ತಗ್ಗನ್ನು ಹಳ್ಳಕೊಳ್ಳಗಳಾಗಿ ಮಾಡಿರೆಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="17">ಏಕೆಂದರೆ ಯೆಹೋವ ದೇವರು, ‘ನೀವು ಗಾಳಿಯನ್ನೂ, ಮಳೆಯನ್ನೂ ಕಾಣುವುದಿಲ್ಲ. ಆದರೆ ನೀವು ನಿಮ್ಮ ದನಗಳೂ, ನಿಮ್ಮ ಪಶುಗಳೂ ಕುಡಿಯುವ ಹಾಗೆ ಈ ತಗ್ಗು ನೀರಿನಿಂದ ತುಂಬುವುದು.’</verse>
				<verse number="18">ಇದಲ್ಲದೆ ಇದು ಯೆಹೋವ ದೇವರ ದೃಷ್ಟಿಗೆ ಅಲ್ಪವಾಗಿರುವುದು. ಅವರು ಮೋವಾಬ್ಯರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿಕೊಡುವರು.</verse>
				<verse number="19">ನೀವು ಕೋಟೆಯುಳ್ಳ ಎಲ್ಲಾ ಪಟ್ಟಣಗಳನ್ನೂ ನಾಶಮಾಡಿಬಿಟ್ಟು, ಉತ್ತಮವಾದ ಎಲ್ಲಾ ಮರಗಳನ್ನೂ ಬೀಳಮಾಡಿ, ನೀರು ಬಾವಿಗಳನ್ನೆಲ್ಲಾ ಮುಚ್ಚಿ, ಉತ್ತಮವಾದ ಭೂಮಿಯಲ್ಲಿರುವ ಹೊಲಗಳನ್ನೆಲ್ಲಾ ಕಲ್ಲುಗಳಿಂದ ಕೆಡಿಸುವಿರಿ,” ಎಂದನು.</verse>
				<verse number="20">ಉದಯದಲ್ಲಿ ಕಾಣಿಕೆಗಳನ್ನು ಅರ್ಪಿಸುತ್ತಿರುವಾಗ, ನೀರು ಎದೋಮಿನ ಮಾರ್ಗವಾಗಿ ಬಂದದ್ದರಿಂದ ದೇಶವು ನೀರಿನಿಂದ ತುಂಬಿಕೊಂಡಿತು.</verse>
				<verse number="21">ಅರಸರು ತಮ್ಮ ಸಂಗಡ ಯುದ್ಧಮಾಡುವುದಕ್ಕೆ ಬಂದಿದ್ದಾರೆಂದು ಮೋವಾಬ್ಯರು ಕೇಳಿದಾಗ, ಅವರು ಆಯುಧ ಧರಿಸತಕ್ಕ ಪ್ರಾಯಸ್ಥರು ಮೊದಲುಗೊಂಡು, ಸಮಸ್ತರನ್ನು ಕೂಡಿಸಿಕೊಂಡು ಮೇರೆಯಲ್ಲಿ ನಿಂತರು.</verse>
				<verse number="22">ಮೋವಾಬ್ಯರು ಉದಯಕಾಲದಲ್ಲಿ ಎದ್ದು, ಆ ನೀರಿನ ಮೇಲೆ ಸೂರ್ಯ ಪ್ರಕಾಶ ಮೂಡಿದ್ದರಿಂದ ಆಚೆಯಲ್ಲಿರುವ ಆ ನೀರು ರಕ್ತದ ಹಾಗೆ ಕೆಂಪಾಗಿರುವುದನ್ನು ಕಂಡರು.</verse>
				<verse number="23">ಆಗ ಅವರು, “ಇದು ರಕ್ತವೇ. ಆ ಅರಸರು ತಮ್ಮನ್ನು ತಾವೇ ನಿಜವಾಗಿ ನಾಶಮಾಡಿ ಒಬ್ಬರನ್ನೊಬ್ಬರು ಕೊಂದಿದ್ದಾರೆ. ಈಗ ಮೋವಾಬ್ಯರೇ ಕೊಳ್ಳೆಗೆ ಬನ್ನಿರಿ,” ಎಂದು ಹೇಳಿಕೊಂಡರು.</verse>
				<verse number="24">ಅವರು ಇಸ್ರಾಯೇಲಿನ ದಂಡಿಗೆ ಬಂದಾಗ, ಇಸ್ರಾಯೇಲರು ಎದ್ದು ಮೋವಾಬ್ಯರು ತಮ್ಮ ಮುಂದೆ ಓಡಿಹೋಗುವ ಹಾಗೆ ಅವರನ್ನು ಸೋಲಿಸಿ, ಮೋವಾಬ್ಯರನ್ನು ಅವರ ದೇಶದವರೆಗೂ ಹೊಡೆಯುತ್ತಾ ಬಂದರು.</verse>
				<verse number="25">ಇದಲ್ಲದೆ ಅವರು ಪಟ್ಟಣಗಳನ್ನು ಕೆಡವಿಹಾಕಿ, ಹೊಲಗಳ ಮೇಲೆ ಕಲ್ಲನ್ನು ಹಾಕಿ ತುಂಬಿಸಿ, ಬಾವಿಗಳನ್ನೆಲ್ಲಾ ಮುಚ್ಚಿ, ಸಮಸ್ತ ಉತ್ತಮವಾದ ಮರಗಳನ್ನು ಕಡಿದುಹಾಕಿದರು. ಕೀರ್ ಹರೆಷೆತ್ ನಲ್ಲಿ ಮಾತ್ರ ಅದರ ಕಲ್ಲುಗಳನ್ನು ಉಳಿಸಿಬಿಟ್ಟರು. ಆದರೆ ಕಲ್ಲೆಸೆಯುವವರು ಅದನ್ನು ಸುತ್ತಿಕೊಂಡು ಹೊಡೆದುಬಿಟ್ಟರು.</verse>
				<verse number="26">ಮೋವಾಬಿನ ಅರಸನು ಯುದ್ಧವು ತನಗೆ ಅತಿ ಕಷ್ಟವಾಯಿತೆಂದು ಕಂಡಾಗ, ಎದೋಮಿನ ಅರಸನ ಮೇಲೆ ಹೋಗಿ ಬೀಳುವ ನಿಮಿತ್ತ, ಖಡ್ಗ ಹಿಡಿಯುವ ಏಳು ನೂರು ಮಂದಿಯನ್ನು ತನ್ನ ಸಂಗಡ ತೆಗೆದುಕೊಂಡನು. ಆದರೆ ಅದು ಅವರಿಂದ ಆಗದೆ ಹೋಯಿತು.</verse>
				<verse number="27">ಆಗ ಮೋವಾಬಿನ ಅರಸನು ತನಗೆ ಬದಲಾಗಿ ಆಳುವುದಕ್ಕಿರುವ ತನ್ನ ಹಿರಿಯ ಮಗನನ್ನು ತೆಗೆದುಕೊಂಡು, ಅವನನ್ನು ಗೋಡೆಯ ಮೇಲೆ ದಹನಬಲಿಯಾಗಿ ಅರ್ಪಿಸಿದನು. ಮೋವಾಬ್ಯರು ಇಸ್ರಾಯೇಲರಿಗೆ ವಿರೋಧವಾಗಿ ರೋಷವುಳ್ಳವರಾಗಿ ಅವರನ್ನು ಬಿಟ್ಟು, ತಮ್ಮ ದೇಶಕ್ಕೆ ಹಿಂದಿರುಗಿ ಹೋದರು.</verse>
			</chapter>
			<chapter number="4">
				<verse number="1">ಪ್ರವಾದಿಗಳ ಗುಂಪಿನಲ್ಲಿದ್ದ ಒಬ್ಬ ಪ್ರವಾದಿಯ ಹೆಂಡತಿ ಎಲೀಷನಿಗೆ ಕೂಗಿ, “ನಿನ್ನ ದಾಸನಾದ ನನ್ನ ಗಂಡನು ಮರಣಹೊಂದಿದನು. ನಿನ್ನ ದಾಸನು ಯೆಹೋವ ದೇವರಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ. ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸರಾಗಿ ತೆಗೆದುಕೊಳ್ಳಲು ಬಂದಿದ್ದಾನೆ,” ಎಂದಳು.</verse>
				<verse number="2">ಎಲೀಷನು ಅವಳಿಗೆ, “ನಾನು ನಿನಗೆ ಏನು ಮಾಡಬೇಕು? ಮನೆಯಲ್ಲಿ ನಿನಗೆ ಏನು ಉಂಟು? ನನಗೆ ತಿಳಿಸು,” ಎಂದನು. ಅವಳು, “ನಿನ್ನ ಸೇವಕಿಗೆ ಒಂದು ಪಾತ್ರೆಯಲ್ಲಿ ಸ್ವಲ್ಪವೇ ಎಣ್ಣೆ ಅಲ್ಲದೆ ಮನೆಯಲ್ಲಿ ಮತ್ತೊಂದಿಲ್ಲ,” ಎಂದಳು.</verse>
				<verse number="3">ಆಗ ಅವನು, “ನೀನು ಹೋಗಿ ಹೊರಗಿರುವ ನಿನ್ನ ಎಲ್ಲಾ ನೆರೆಮನೆಯವರಿಂದ ಬರಿದಾದ ಪಾತ್ರೆಗಳನ್ನು ಬೇಕಾದಷ್ಟು ಕೇಳಿ ತೆಗೆದುಕೊಂಡು ಬಾ.</verse>
				<verse number="4">ನೀನು ಒಳಗೆ ಪ್ರವೇಶಿಸಿ, ನೀನೂ, ನಿನ್ನ ಪುತ್ರರೂ ಬಾಗಿಲು ಮುಚ್ಚಿಕೊಂಡು, ಆ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದು ತುಂಬಿದ್ದನ್ನು ಒಂದು ಕಡೆ ಇಡು,” ಎಂದನು.</verse>
				<verse number="5">ಹೀಗೆ ಅವಳು ಅವನನ್ನು ಬಿಟ್ಟು ಹೋಗಿ, ತಾನೂ, ತನ್ನ ಪುತ್ರರೂ ಬಾಗಿಲು ಮುಚ್ಚಿದರು. ಇವರು ಅವಳ ಬಳಿಗೆ ಪಾತ್ರೆಗಳನ್ನು ತೆಗೆದುಕೊಂಡು ಬಂದರು. ಅವಳು ಎಣ್ಣೆಯನ್ನು ಅವುಗಳಲ್ಲಿ ಹೊಯ್ದಳು.</verse>
				<verse number="6">ಆ ಪಾತ್ರೆಗಳು ತುಂಬಿದ ತರುವಾಯ ಅವಳು ತನ್ನ ಮಗನಿಗೆ, “ಇನ್ನೊಂದು ಪಾತ್ರೆಯನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದಳು. ಮಗನು ಅವಳಿಗೆ, “ಇನ್ನೊಂದು ಪಾತ್ರೆ ಇಲ್ಲ,” ಎಂದನು. ಆಗ ಎಣ್ಣೆಯು ನಿಂತುಹೋಯಿತು.</verse>
				<verse number="7">ಅವಳು ಬಂದು ದೇವರ ಮನುಷ್ಯನಿಗೆ ತಿಳಿಸಿದಳು. ಅವನು, “ನೀನು ಹೋಗಿ ಆ ಎಣ್ಣೆಯನ್ನು ಮಾರಿ ನಿನ್ನ ಸಾಲವನ್ನು ತೀರಿಸಿ, ಮಿಕ್ಕದ್ದರಿಂದ ನೀನೂ, ನಿನ್ನ ಮಕ್ಕಳು ಜೀವನ ಮಾಡಿರಿ,” ಎಂದನು.</verse>
				<verse number="8">ಒಂದು ದಿನ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬಳು ಶ್ರೀಮಂತ ಸ್ತ್ರೀಯು ಇದ್ದಳು. ಅವಳು ಅವನನ್ನು ಊಟ ಮಾಡಲು ಬಲವಂತ ಮಾಡಿದಳು. ಹಾಗೆಯೇ ಅವನು ಆ ಮಾರ್ಗವಾಗಿ ಹೋಗುವಾಗಲೆಲ್ಲಾ, ಅಲ್ಲಿ ಊಟ ಮಾಡಲು ಹೋಗುತ್ತಿದ್ದನು.</verse>
				<verse number="9">ಆದ್ದರಿಂದ ಅವಳು ತನ್ನ ಗಂಡನಿಗೆ, “ಇಗೋ, ನಮ್ಮ ಬಳಿಯಲ್ಲಿ ಯಾವಾಗಲೂ ಹಾದುಹೋಗುವ ಇವನು ದೇವರ ಪರಿಶುದ್ಧ ಮನುಷ್ಯನಾಗಿರುತ್ತಾನೆಂದು ನನಗೆ ಗೊತ್ತಾಯಿತು.</verse>
				<verse number="10">ನಾವು ಮಾಳಿಗೆಯ ಮೇಲೆ ಒಂದು ಚಿಕ್ಕ ಕೊಠಡಿಯನ್ನು ಕಟ್ಟಿಸಿ, ಅದರಲ್ಲಿ ಅವನಿಗೋಸ್ಕರ ಮಂಚವನ್ನೂ, ಮೇಜನ್ನೂ, ಕುರ್ಚಿಯನ್ನೂ, ದೀಪವನ್ನೂ ಇಡೋಣ. ಅವನು ನಮ್ಮ ಬಳಿಗೆ ಬರುವಾಗ ಅಲ್ಲಿ ಇರಲಿ,” ಎಂದಳು.</verse>
				<verse number="11">ಒಂದು ದಿವಸ ಎಲೀಷನು ಅಲ್ಲಿಗೆ ಬಂದು, ಆ ಕೊಠಡಿಯಲ್ಲಿ ಪ್ರವೇಶಿಸಿ ಮಲಗಿದನು.</verse>
				<verse number="12">ಆಗ ಎಲೀಷನು ತನ್ನ ಸೇವಕನಾದ ಗೇಹಜಿಗೆ, “ನೀನು ಶೂನೇಮ್ಯಳನ್ನು ಕರೆ,” ಎಂದನು. ಅವನು ಅವಳನ್ನು ಕರೆದದ್ದರಿಂದ ಅವಳು ಎಲೀಷನ ಮುಂದೆ ಬಂದು ನಿಂತಳು.</verse>
				<verse number="13">ಅವನು ಗೇಹಜಿಗೆ, “ಇಗೋ, ನೀನು ಕಷ್ಟಪಟ್ಟು ನಮಗೋಸ್ಕರ ಉಪಕಾರಮಾಡಿದೆ. ನಾನು ನಿನಗೆ ಮಾಡಬೇಕಾದದ್ದೇನು? ನಿನಗೋಸ್ಕರ ಅರಸನ ಸಂಗಡಲಾದರೂ, ಸೈನ್ಯಾಧಿಪತಿಯ ಸಂಗಡಲಾದರೂ ಮಾತನಾಡಬೇಕೋ ಎಂದು ಆಕೆಗೆ ಕೇಳು,” ಎಂದನು. ಅದಕ್ಕವಳು, “ನಾನು ನನ್ನ ಜನರ ಮಧ್ಯದಲ್ಲಿ ಸುಖವಾಗಿದ್ದೇನೆ,” ಎಂದಳು.</verse>
				<verse number="14">ಎಲೀಷನು ಗೇಹಜಿಗೆ, “ಅವಳಿಗೋಸ್ಕರ ಮಾಡಬೇಕಾದದ್ದೇನು?” ಎಂದನು. ಅದಕ್ಕೆ ಗೇಹಜಿಯು, “ಅವಳಿಗೆ ಮಕ್ಕಳಿಲ್ಲ. ಅವಳ ಗಂಡನು ವೃದ್ಧನಾಗಿದ್ದಾನೆ,” ಎಂದನು.</verse>
				<verse number="15">ಪ್ರವಾದಿಯು, “ಅವಳನ್ನು ಕರೆ,” ಎಂದನು. ಗೇಹಜಿಯು ಅವಳನ್ನು ಕರೆದಾಗ ಅವಳು ಬಾಗಿಲಲ್ಲೇ ನಿಂತಳು.</verse>
				<verse number="16">ಆಗ ಅವನು, “ಮುಂದಿನ ವರ್ಷ ಈ ಸಮಯದಲ್ಲಿ ನಿನ್ನ ಕೈಯಲ್ಲಿ ಒಬ್ಬ ಮಗನನ್ನು ಎತ್ತಿಕೊಂಡಿರುವೆ,” ಎಂದನು. ಅದಕ್ಕವಳು, “ಹಾಗಲ್ಲ, ದೇವರ ಮನುಷ್ಯನೇ, ನನ್ನ ಒಡೆಯನೇ, ನಿನ್ನ ಸೇವಕಿಗೆ ನೀನು ಸುಳ್ಳು ಹೇಳಬೇಡ,” ಎಂದಳು.</verse>
				<verse number="17">ಆದರೆ, ಆ ಸ್ತ್ರೀಯು ಗರ್ಭಧರಿಸಿ, ಎಲೀಷನು ಹೇಳಿದ ಪ್ರಕಾರ ಮುಂದಿನ ವರ್ಷದ ಅದೇ ಸಮಯದಲ್ಲಿ ಮಗನನ್ನು ಹೆತ್ತಳು.</verse>
				<verse number="18">ಆ ಮಗುವು ಬೆಳೆದಾಗ ಒಂದು ದಿವಸ, ಅವನು ಬೆಳೆ ಕೊಯ್ಯುವವರ ಬಳಿಯಲ್ಲಿರುವ ತನ್ನ ತಂದೆಯ ಬಳಿಗೆ ಹೋದನು.</verse>
				<verse number="19">ಆಗ ಅವನು ತನ್ನ ತಂದೆಗೆ, “ನನ್ನ ತಲೆ, ನನ್ನ ತಲೆ,” ಎಂದನು. ತಂದೆಯು ತನ್ನ ಸೇವಕನಿಗೆ, “ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋಗು,” ಎಂದನು.</verse>
				<verse number="20">ಸೇವಕನು ಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋದನು. ಅವನು ಮಧ್ಯಾಹ್ನದವರೆಗೂ ಅವಳ ತೊಡೆಯ ಮೇಲೆ ಇದ್ದು ಅನಂತರ ಮರಣಹೊಂದಿದನು.</verse>
				<verse number="21">ಆಗ ಅವಳು ಏರಿಹೋಗಿ, ಅವನನ್ನು ದೇವರ ಮನುಷ್ಯನ ಮಂಚದ ಮೇಲೆ ಮಲಗಿಸಿ ಬಾಗಿಲು ಮುಚ್ಚಿದಳು.</verse>
				<verse number="22">ತನ್ನ ಗಂಡನನ್ನು ಕರೆದು, “ನಾನು ದೇವರ ಮನುಷ್ಯನ ಬಳಿಗೆ ಬೇಗನೆ ಹೋಗಿ ತಿರುಗಿ ಬರುವ ಹಾಗೆ, ನೀನು ದಯಮಾಡಿ ಸೇವಕನನ್ನೂ ಒಂದು ಕತ್ತೆಯನ್ನೂ ಕಳುಹಿಸು,” ಎಂದಳು.</verse>
				<verse number="23">ಅದಕ್ಕೆ ಅವನು, “ಇದು ಅಮಾವಾಸ್ಯೆ ಅಲ್ಲ, ಸಬ್ಬತ್ ದಿನವೂ ಅಲ್ಲ. ನೀನು ಏಕೆ ಈ ಹೊತ್ತು ಅವನ ಬಳಿಗೆ ಹೋಗುತ್ತೀ?” ಎಂದನು. ಅದಕ್ಕವಳು, “ಅಡ್ಡಿಯೇನಿಲ್ಲ,” ಎಂದಳು.</verse>
				<verse number="24">ಆಗ ಅವಳು ಕತ್ತೆಯ ಮೇಲೆ ತಡಿಯನ್ನು ಹಾಕಿಸಿ ತನ್ನ ಸೇವಕನಿಗೆ, “ನಡೆಸಿಕೊಂಡು ಹೋಗು. ನಾನು ನಿನಗೆ ಹೇಳುವವರೆಗೂ, ನನಗೋಸ್ಕರ ಸವಾರಿಯನ್ನು ನಿಧಾನಗೊಳಿಸಬೇಡ,” ಎಂದು ಹೇಳಿ,</verse>
				<verse number="25">ಕರ್ಮೆಲ್ ಬೆಟ್ಟದಲ್ಲಿರುವ ದೇವರ ಮನುಷ್ಯನ ಬಳಿಗೆ ಬಂದಳು. ಆಗ ದೇವರ ಮನುಷ್ಯನು ದೂರದಿಂದ ಅವಳು ಬರುವುದನ್ನು ಕಂಡನು. ಅವನು ತನ್ನ ಸೇವಕನಾದ ಗೇಹಜಿಗೆ, “ಇಗೋ, ಆ ಶೂನೇಮ್ಯಳು ಬರುತ್ತಿದ್ದಾಳೆ.</verse>
				<verse number="26">ನೀನು ಅವಳನ್ನು ಎದುರುಗೊಳ್ಳಲು ಓಡಿಹೋಗಿ, ಅವಳಿಗೆ, ‘ನಿನಗೂ, ನಿನ್ನ ಗಂಡನಿಗೂ ಮಗನಿಗೂ ಕ್ಷೇಮವೇ? ಎಂದು ಕೇಳು,’ ” ಎಂದನು. ಅವಳು, “ಕ್ಷೇಮ” ಎಂದಳು.</verse>
				<verse number="27">ಅವಳು ಬೆಟ್ಟಕ್ಕೆ ದೇವರ ಮನುಷ್ಯನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಿ ಹಾಕಲು ಗೇಹಜಿಯು ಹತ್ತಿರ ಬಂದದ್ದರಿಂದ ದೇವರ ಮನುಷ್ಯನು, “ಅವಳನ್ನು ಬಿಡು. ಏಕೆಂದರೆ ಅವಳ ಹೃದಯವು ಬಹಳ ನೋವಿನಿಂದ ತುಂಬಿದೆ. ಯೆಹೋವ ದೇವರು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾರೆ,” ಎಂದನು.</verse>
				<verse number="28">ಆಗ ಅವಳು, “ನಾನು ನನ್ನ ಒಡೆಯನಿಂದ ಪುತ್ರನನ್ನು ಕೇಳಿಕೊಂಡೆನೋ? ನನ್ನನ್ನು ಮೋಸಗೊಳಿಸಬೇಡವೆಂದು ನಾನು ಹೇಳಲಿಲ್ಲವೋ?” ಎಂದಳು.</verse>
				<verse number="29">ಎಲೀಷನು ಗೇಹಜಿಗೆ, “ನೀನು ನಿನ್ನ ಸಡಿಲವಾದ ಉಡುಪನ್ನು ನಡುವಿಗೆ ಕಟ್ಟಿಕೊಂಡು, ನನ್ನ ಕೋಲನ್ನು ನಿನ್ನ ಕೈಯಲ್ಲಿ ಹಿಡಿದುಕೊಂಡು ಹೋಗು. ನಿನಗೆ ಯಾವನಾದರೂ ಎದುರುಗೊಂಡರೆ, ಅವನನ್ನು ವಂದಿಸಬೇಡ; ಯಾವನಾದರೂ ನಿನ್ನನ್ನು ವಂದಿಸಿದರೆ, ಅವನಿಗೆ ಉತ್ತರ ಹೇಳಬೇಡ; ನನ್ನ ಕೋಲನ್ನು ಆ ಹುಡುಗನ ಮುಖದ ಮೇಲೆ ಹಾಕು,” ಎಂದನು.</verse>
				<verse number="30">ಆದರೆ ಹುಡುಗನ ತಾಯಿಯು, “ಯೆಹೋವ ದೇವರ ಜೀವದಾಣೆ, ನಿನ್ನ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದಳು. ಆಗ ಅವನೆದ್ದು ಅವಳ ಹಿಂದೆ ಹೋದನು.</verse>
				<verse number="31">ಗೇಹಜಿಯು ಅವರಿಗೆ ಮುಂದಾಗಿ ಹೋಗಿ, ಆ ಕೋಲನ್ನು ಆ ಹುಡುಗನ ಮುಖದ ಮೇಲೆ ಇಟ್ಟನು. ಆದರೆ ಶಬ್ದವಾದರೂ, ಆಲೈಸುವುದಾದರೂ ಇರಲಿಲ್ಲ. ಆದ್ದರಿಂದ ಗೇಹಜಿಯು ಎಲೀಷನನ್ನು ಎದುರುಗೊಳ್ಳಲು ತಿರುಗಿ ಹೋಗಿ ಅವನಿಗೆ, “ಹುಡುಗನು ಎಚ್ಚರವಾಗಲಿಲ್ಲ,” ಎಂದನು.</verse>
				<verse number="32">ಎಲೀಷನು ಆ ಮನೆಯನ್ನು ಮುಟ್ಟಿದಾಗ, ಸತ್ತ ಹುಡುಗನನ್ನು ತನ್ನ ಮಂಚದ ಮೇಲೆ ಇಟ್ಟಿರುವುದನ್ನು ಕಂಡನು.</verse>
				<verse number="33">ಅವನು ಒಳಗೆ ಪ್ರವೇಶಿಸಿ, ಯಾರೂ ಒಳಗೆ ಬಾರದಂತೆ ಬಾಗಿಲು ಮುಚ್ಚಿಕೊಂಡು, ಯೆಹೋವ ದೇವರನ್ನು ಪ್ರಾರ್ಥಿಸಿದನು.</verse>
				<verse number="34">ಅವನು ಮಗುವಿನ ಮೇಲೆ ಮಲಗಿಕೊಂಡು, ತನ್ನ ಬಾಯಿಯನ್ನು ಅವನ ಬಾಯಿಯ ಮೇಲೆಯೂ, ತನ್ನ ಕಣ್ಣುಗಳನ್ನು ಅವನ ಕಣ್ಣುಗಳ ಮೇಲೆಯೂ, ತನ್ನ ಕೈಗಳನ್ನು ಅವನ ಕೈಗಳ ಮೇಲೆಯೂ ಇರಿಸಿದನು. ಅವನ ಮೇಲೆ ಬೋರಲು ಬಿದ್ದುದರಿಂದ ಮಗುವಿನ ಶರೀರವು ಬೆಚ್ಚಗೆ ಆಯಿತು.</verse>
				<verse number="35">ಅವನು ಆಮೇಲೆ ಎದ್ದು ಕೋಣೆಯಲ್ಲಿ ಸ್ವಲ್ಪ ಅತ್ತಿತ್ತ ತಿರುಗಾಡಿ, ಪುನಃ ಅವನ ಮೇಲೆ ಬೋರಲು ಬಿದ್ದನು. ಆಗ ಆ ಹುಡುಗನು ಏಳು ಸಾರಿ ಸೀತು ಕಣ್ಣುಗಳನ್ನು ತೆರೆದನು.</verse>
				<verse number="36">ಆಗ ಅವನು ಗೇಹಜಿಯನ್ನು ಕರೆದು ಅವನಿಗೆ, “ಶೂನೇಮ್ಯಳನ್ನು ಕರೆ,” ಎಂದನು. ಗೇಹಜಿಯು ಅವಳನ್ನು ಕರೆದನು. ಅವಳು ಎಲೀಷನ ಬಳಿಗೆ ಬಂದಾಗ ಅವನು, “ನಿನ್ನ ಪುತ್ರನನ್ನು ತೆಗೆದುಕೊಂಡು ಹೋಗು,” ಎಂದನು.</verse>
				<verse number="37">ಆಗ ಅವಳು ಬಂದು, ಅವನ ಪಾದಗಳ ಮೇಲೆ ಬಿದ್ದು, ನೆಲಕ್ಕೆ ಬಗ್ಗಿ ತನ್ನ ಮಗನನ್ನು ಎತ್ತಿಕೊಂಡು ಹೊರಟು ಹೋದಳು.</verse>
				<verse number="38">ಎಲೀಷನು ತಿರುಗಿ ಗಿಲ್ಗಾಲಿಗೆ ಬಂದಾಗ, ದೇಶದಲ್ಲಿ ಬರ ಉಂಟಾಗಿತ್ತು. ಪ್ರವಾದಿಗಳ ಮಂಡಳಿ ಅವನ ಮುಂದೆ ಕುಳಿತಿರುವಾಗ, ಅವನು ತನ್ನ ಸೇವಕನಿಗೆ, “ನೀನು ದೊಡ್ಡ ಗಡಿಗೆಯನ್ನು ಮೇಲಿಟ್ಟು, ಈ ಜನರಿಗೋಸ್ಕರ ಅಡಿಗೆ ಮಾಡು,” ಎಂದನು.</verse>
				<verse number="39">ಅವರಲ್ಲಿ ಒಬ್ಬನು ಪಲ್ಯವನ್ನು ತರಲು ಅಡವಿಗೆ ಹೋಗಿ, ಅಡವಿಯ ಬಳ್ಳಿಯನ್ನು ಕಂಡು, ಅಡವಿಯ ಕಾಯಿಗಳನ್ನು ತನ್ನ ಉಡಿಯ ತುಂಬ ಕೂಡಿಸಿಕೊಂಡು ಬಂದು, ಅವುಗಳನ್ನು ಕೊಯ್ದು ಗಡಿಗೆಯಲ್ಲಿ ಹಾಕಿದನು. ಅವು ಏನೆಂದು ಯಾರಿಗೂ ತಿಳಿದಿರಲಿಲ್ಲ.</verse>
				<verse number="40">ಜನರಿಗೆ ಅದನ್ನು ತಿನ್ನುವುದಕ್ಕೆ ಬಡಿಸಿದರು. ಅವರು ಆಹಾರವನ್ನು ತಿನ್ನುತ್ತಿರುವಾಗ, “ದೇವರ ಮನುಷ್ಯನೇ, ಗಡಿಗೆಯಲ್ಲಿ ಮರಣ,” ಎಂದು ಕೂಗಿದರು. ಅವರು ಅದರಲ್ಲಿದ್ದದ್ದನ್ನು ತಿನ್ನಲಾರದೆ ಹೋದರು.</verse>
				<verse number="41">ಆಗ ಎಲೀಷನು ಹಿಟ್ಟನ್ನು ತೆಗೆದುಕೊಂಡು ಬರಲು ಹೇಳಿ, ಅದನ್ನು ಗಡಿಗೆಯಲ್ಲಿ ಹಾಕಿ, “ಈಗ ಇದನ್ನು ಜನರಿಗೆ ಬಡಿಸಿರಿ,” ಎಂದನು. ಆಗ ಆ ಗಡಿಗೆಯಲ್ಲಿನ ವಿಷವೆಲ್ಲಾ ಹೋಗಿತ್ತು.</verse>
				<verse number="42">ಬಾಳ್ ಶಾಲಿಷಾ ಊರಿನಿಂದ ಒಬ್ಬನು ದೇವರ ಮನುಷ್ಯನಿಗೆ ಪ್ರಥಮ ಫಲವಾದ ಜವೆಗೋಧಿಯ ಇಪ್ಪತ್ತು ರೊಟ್ಟಿಗಳನ್ನೂ ಒಂದು ಚೀಲ ತುಂಬಿದ ತೆನೆಗಳನ್ನೂ ತೆಗೆದುಕೊಂಡು ಬಂದನು. ಆಗ ಎಲೀಷನು, “ಜನರಿಗೆ ಕೊಡು ಅವರು ತಿನ್ನಲಿ,” ಎಂದನು.</verse>
				<verse number="43">ಅವನ ಸೇವಕನು, “ಇದನ್ನು ನೂರು ಮಂದಿಗೆ ಬಡಿಸುವುದು ಹೇಗೆ?” ಎಂದನು. “ ‘ತಿನ್ನಲು ಜನರಿಗೆ ನೀಡು, ಅವರು ತಿಂದು ಅನಂತರ ಉಳಿಯುವುದು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಎಲೀಷನು ಉತ್ತರಕೊಟ್ಟನು.</verse>
				<verse number="44">ಹಾಗೆಯೇ ಸೇವಕನು ಬಡಿಸಿದನು. ಯೆಹೋವ ದೇವರು ನುಡಿದಂತೆಯೇ ಜನರು ಊಟಮಾಡಿ, ತೃಪ್ತರಾಗಿ ಇನ್ನೂ ಉಳಿಯಿತು.</verse>
			</chapter>
			<chapter number="5">
				<verse number="1">ಅರಾಮಿನ ಅರಸನ ಸೈನ್ಯಾಧಿಪತಿ ನಾಮಾನನು ತನ್ನ ಯಜಮಾನನ ಮುಂದೆ ಮಹಾಪುರುಷನಾಗಿಯೂ, ಘನವುಳ್ಳವನಾಗಿಯೂ ಇದ್ದನು. ಏಕೆಂದರೆ ಅವನಿಂದ ಯೆಹೋವ ದೇವರು ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದರು. ಇದಲ್ಲದೆ ಅವನು ಪರಾಕ್ರಮಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾಗಿದ್ದನು.</verse>
				<verse number="2">ಅರಾಮಿನವರು ಗುಂಪುಗುಂಪಾಗಿ ಹೊರಟು, ಇಸ್ರಾಯೇಲ್ ದೇಶದಿಂದ ಒಬ್ಬ ಹುಡುಗಿಯನ್ನು ಸೆರೆಯಾಗಿ ಹಿಡಿದುಕೊಂಡು ಬಂದರು. ಅವಳು ನಾಮಾನನ ಹೆಂಡತಿಗೆ ಸೇವಕಿಯಾದಳು.</verse>
				<verse number="3">ಅವಳು ತನ್ನ ಯಜಮಾನನಿಗೆ, “ನನ್ನ ಧಣಿಯು ಸಮಾರ್ಯದಲ್ಲಿರುವ ಪ್ರವಾದಿಯ ಬಳಿಯಲ್ಲಿರುತ್ತಿದ್ದರೆ, ಅವನು ಧಣಿಯ ಕುಷ್ಠರೋಗವನ್ನು ವಾಸಿಮಾಡುತ್ತಿದ್ದನು,” ಎಂದಳು.</verse>
				<verse number="4">ನಾಮಾನನು ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತನ್ನ ಯಜಮಾನನಿಗೆ ತಿಳಿಸಿದನು.</verse>
				<verse number="5">ಅರಾಮ್ಯರ ಅರಸನು, “ನೀನು ಹೋಗಿ ಬಾ. ನಾನು ಇಸ್ರಾಯೇಲಿನ ಅರಸನಿಗೆ ಪತ್ರವನ್ನು ಕಳುಹಿಸುವೆನು,” ಎಂದನು. ಅದರಂತೆ ನಾಮಾನನು 340 ಕಿಲೋಗ್ರಾಂ ಬೆಳ್ಳಿ, 64 ಕಿಲೋಗ್ರಾಂ ಬಂಗಾರ, ಹತ್ತು ಜೊತೆ ಬಟ್ಟೆಗಳನ್ನೂ ತೆಗೆದುಕೊಂಡು ಹೋದನು.</verse>
				<verse number="6">ಅವನು ಇಸ್ರಾಯೇಲಿನ ಅರಸನ ಬಳಿಗೆ ಆ ಪತ್ರವನ್ನು ತೆಗೆದುಕೊಂಡು ಬಂದನು. ಅದರಲ್ಲಿ, “ಈ ಪತ್ರ ನಿನಗೆ ಸೇರುವಾಗ, ನಿನ್ನ ಸೇವಕನಾದ ನಾಮಾನನ ಕುಷ್ಠರೋಗವನ್ನು ವಾಸಿಮಾಡುವ ಹಾಗೆ ನಿನ್ನ ಬಳಿಗೆ ಕಳುಹಿಸಿದ್ದೇನೆ,” ಎಂದು ಬರೆದಿತ್ತು.</verse>
				<verse number="7">ಇಸ್ರಾಯೇಲಿನ ಅರಸನು ಆ ಪತ್ರವನ್ನು ಓದಿದ ಮೇಲೆ ತನ್ನ ವಸ್ತ್ರಗಳನ್ನು ಹರಿದುಕೊಂಡು, “ಕೊಲ್ಲುವುದಕ್ಕೂ, ಬದುಕಿಸುವುದಕ್ಕೂ ನಾನು ದೇವರೋ? ಇವನ ಕುಷ್ಠರೋಗವನ್ನು ವಾಸಿ ಮಾಡುವುದಕ್ಕೆ ನನ್ನ ಬಳಿಗೆ ಕಳುಹಿಸಿದ್ದೇನು? ಇವನು ನನಗೆ ವಿರೋಧವಾಗಿ ಜಗಳಕ್ಕೆ ಕಾರಣ ಹುಡುಕುವುದನ್ನು ನೀವೇ ನೋಡಿರಿ,” ಎಂದನು.</verse>
				<verse number="8">ಇಸ್ರಾಯೇಲಿನ ಅರಸನು ತನ್ನ ವಸ್ತ್ರಗಳನ್ನು ಹರಿದುಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ, “ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ನಾಮಾನನು ತಿಳಿದುಕೊಳ್ಳುವಂತೆ ಅವನು ನನ್ನ ಬಳಿಗೆ ಬರಲಿ,” ಎಂದು ಅರಸನಿಗೆ ಹೇಳಿ ಕಳುಹಿಸಿದನು.</verse>
				<verse number="9">ಹಾಗೆಯೇ ನಾಮಾನನು ತನ್ನ ಕುದುರೆಗಳ ಸಂಗಡ, ತನ್ನ ರಥದ ಸಂಗಡ ಬಂದು, ಎಲೀಷನ ಮನೆಯ ಬಾಗಿಲ ಬಳಿಯಲ್ಲಿ ನಿಂತನು.</verse>
				<verse number="10">ಆಗ ಎಲೀಷನು, “ನೀನು ಹೋಗಿ ಯೊರ್ದನಿನಲ್ಲಿ ಏಳು ಸಾರಿ ಸ್ನಾನಮಾಡು, ಆಗ ನಿನ್ನ ಶರೀರವು ಮೊದಲಿನಂತೆ ಮಾರ್ಪಡುವುದು, ನೀನು ಶುದ್ಧನಾಗುವೆ,” ಎಂದು ಹೇಳಲು, ಅವನ ಬಳಿಗೆ ಸೇವಕನನ್ನು ಕಳುಹಿಸಿದನು.</verse>
				<verse number="11">ಆಗ ನಾಮಾನನು ಕೋಪಗೊಂಡು ಹೊರಟುಹೋಗಿ, “ಅವನು ನಿಶ್ಚಯವಾಗಿ ನನ್ನ ಬಳಿಗೆ ಹೊರಟುಬಂದು, ತನ್ನ ದೇವರಾದ ಯೆಹೋವ ದೇವರ ಹೆಸರನ್ನು ಕರೆದು, ನನ್ನ ಚರ್ಮದ ಮೇಲೆ ತನ್ನ ಕೈಯನ್ನಾಡಿಸಿ, ಕುಷ್ಠರೋಗವನ್ನು ವಾಸಿಮಾಡುವನೆಂದು, ನಾನು ನೆನಸಿದೆ.</verse>
				<verse number="12">ನಾನು ಹೊಳೆಗಳಲ್ಲಿ ಸ್ನಾನಮಾಡಿ ಶುದ್ಧನಾಗುವಂತೆ ದಮಸ್ಕದ ನದಿಗಳಾದ ಅಬಾನಾವೂ, ಪಾರ್ಪರೂ ಇಸ್ರಾಯೇಲಿನ ಸಮಸ್ತ ನೀರುಗಳಿಗಿಂತ ಉತ್ತಮವಾಗಿಲ್ಲವೋ?” ಎಂದು ಹೇಳಿ ತಿರುಗಿಕೊಂಡು ಕೋಪದಿಂದ ಹೋದನು.</verse>
				<verse number="13">ಆದರೆ ನಾಮಾನನ ಸೇವಕನು ಅವನ ಬಳಿಗೆ ಬಂದು, ಅವನ ಸಂಗಡ ಮಾತನಾಡಿ, “ನನ್ನ ತಂದೆಯೇ, ಪ್ರವಾದಿಯು ದೊಡ್ಡ ಕಾರ್ಯವನ್ನು ನಿನಗೆ ಹೇಳಿದ್ದರೆ, ನೀನು ಮಾಡುತ್ತಿದ್ದಿಲ್ಲವೋ? ಅವನು ನಿನಗೆ, ‘ಸ್ನಾನಮಾಡಿ ಶುದ್ಧನಾಗು’ ಎಂದು ಹೇಳಿದರಲ್ಲಿ ಅಡ್ಡಿ ಏನು?” ಎಂದನು.</verse>
				<verse number="14">ಆಗ ಅವನು ಇಳಿದು ಹೋಗಿ ದೇವರ ಮನುಷ್ಯನ ಮಾತಿನ ಪ್ರಕಾರ ಯೊರ್ದನಿನಲ್ಲಿ ಏಳು ಸಾರಿ ಮುಳುಗಿದನು. ಆಗ ಅವನ ಶರೀರವು ಚಿಕ್ಕ ಮಗುವಿನ ಶರೀರದ ಹಾಗೆ ಮಾರ್ಪಟ್ಟಿತು, ಅವನು ಶುದ್ಧನಾದನು.</verse>
				<verse number="15">ಆಗ ನಾಮಾನನೂ, ಅವನ ಸಮಸ್ತ ಸೈನ್ಯವೂ ದೇವರ ಮನುಷ್ಯನ ಬಳಿಗೆ ತಿರುಗಿ ಬಂದರು. ಅವನು ಪ್ರವಾದಿಯ ಮುಂದೆ ಬಂದು ನಿಂತು, “ಇಸ್ರಾಯೇಲಿನಲ್ಲಿರುವ ದೇವರ ಹೊರತು ಭೂಮಿಯಲ್ಲೆಲ್ಲೂ ಬೇರೆ ದೇವರು ಇಲ್ಲವೆಂದು ನಾನು ಬಲ್ಲೆನು. ಆದಕಾರಣ ನೀನು ದಯಮಾಡಿ ನಿನ್ನ ಸೇವಕನಿಂದ ಕಾಣಿಕೆಯನ್ನು ತೆಗೆದುಕೋ,” ಎಂದನು.</verse>
				<verse number="16">ಆದರೆ ಪ್ರವಾದಿಯು, “ನಾನು ಯಾರ ಮುಂದೆ ನಿಲ್ಲುತ್ತೇನೋ ಆ ಯೆಹೋವ ದೇವರ ಜೀವದಾಣೆ, ನಾನು ಏನೂ ತೆಗೆದುಕೊಳ್ಳುವುದಿಲ್ಲ,” ಎಂದನು. ಅವನು ತೆಗೆದುಕೊಳ್ಳಬೇಕೆಂದು ಬಲವಂತ ಮಾಡಿದರೂ, “ಬೇಡ,” ಎಂದನು.</verse>
				<verse number="17">ನಾಮಾನನು, “ಹಾಗಾದರೆ ಎರಡು ಹೇಸರಗತ್ತೆಗಳು ಹೊರತಕ್ಕ ಮಣ್ಣು ನಿನ್ನ ಸೇವಕನಿಗೆ ಕೊಡುವಂತೆ ಮಾಡು. ಏಕೆಂದರೆ ನಿನ್ನ ಸೇವಕನು ಇನ್ನು ಮೇಲೆ ಯೆಹೋವ ದೇವರಿಗೆ ಹೊರತಾಗಿ ಅನ್ಯ ದೇವರುಗಳಿಗೆ ದಹನಬಲಿಯನ್ನಾಗಲಿ, ಯಜ್ಞವನ್ನಾಗಲಿ ಅರ್ಪಿಸನು.</verse>
				<verse number="18">ಈ ಕಾರ್ಯವನ್ನು ಯೆಹೋವ ದೇವರು ನಿನ್ನ ಸೇವಕನಿಗೆ ಮನ್ನಿಸಲಿ. ಏನೆಂದರೆ, ನನ್ನ ಯಜಮಾನನು ಅಡ್ಡ ಬೀಳುವುದಕ್ಕೆ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ, ಅವನು ನನ್ನ ಕೈಯ ಮೇಲೆ ಆತುಕೊಳ್ಳುವಾಗ, ರಿಮ್ಮೋನನ ದೇವಸ್ಥಾನದಲ್ಲಿ ನಾನು ಬಾಗಿದರೆ, ಯೆಹೋವ ದೇವರು ನಿನ್ನ ಸೇವಕನಿಗೆ ಈ ಕಾರ್ಯವನ್ನು ಮನ್ನಿಸಲಿ,” ಎಂದನು.</verse>
				<verse number="19">ಅದಕ್ಕೆ ಎಲೀಷನು, “ಸಮಾಧಾನದಿಂದ ಹೋಗು,” ಎಂದನು. ನಾಮಾನನು ಸ್ವಲ್ಪ ದೂರ ಹೋದನು.</verse>
				<verse number="20">ದೇವರ ಮನುಷ್ಯನಾದ ಎಲೀಷನ ಸೇವಕನಾಗಿರುವ ಗೇಹಜಿಯು, “ನನ್ನ ಯಜಮಾನನು ಈ ಅರಾಮ್ಯನಾದ ನಾಮಾನನು ತೆಗೆದುಕೊಂಡು ಬಂದದ್ದನ್ನು ಅವನ ಕೈಯಿಂದ ತೆಗೆದುಕೊಳ್ಳದೆ ಸುಮ್ಮನೆ ಕಳುಹಿಸಿದ್ದಾನೆ. ಆದರೆ ಯೆಹೋವ ದೇವರ ಜೀವದಾಣೆ, ನಾನು ಅವನ ಹಿಂದೆ ಓಡಿಹೋಗಿ, ಅವನ ಕೈಯಿಂದ ಏನಾದರೂ ತೆಗೆದುಕೊಳ್ಳುವೆನು,” ಅಂದುಕೊಂಡನು.</verse>
				<verse number="21">ಅದರಂತೆ ಗೇಹಜಿಯು ನಾಮಾನನ ಹಿಂದೆ ಹೋದನು. ನಾಮಾನನು ತನ್ನ ಹಿಂದೆ ಓಡಿ ಬರುವವನನ್ನು ಕಂಡಾಗ, ಅವನನ್ನು ಎದುರುಗೊಳ್ಳಲು ರಥದಿಂದ ಇಳಿದು ಅವನಿಗೆ, “ಎಲ್ಲಾ ಕ್ಷೇಮವೋ?” ಎಂದನು.</verse>
				<verse number="22">ಅದಕ್ಕೆ ಗೇಹಜಿಯು, “ಎಲ್ಲಾ ಕ್ಷೇಮ. ಪ್ರವಾದಿಗಳ ಮಂಡಳಿಯಲ್ಲಿಯ ಇಬ್ಬರು ಯುವಕರು ಎಫ್ರಾಯೀಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ. ನೀನು ದಯಮಾಡಿ ಅವರಿಗೆ ಮೂರು ಸಾವಿರ ಬೆಳ್ಳಿ ನಾಣ್ಯಗಳನ್ನೂ, ಎರಡು ಜೊತೆ ಬಟ್ಟೆಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ,” ಎಂದನು.</verse>
				<verse number="23">ಆಗ ನಾಮಾನನು, “ನೀನು ದಯಮಾಡಿ ಆರು ಸಾವಿರ ನಾಣ್ಯಗಳನ್ನಾದರೂ ತೆಗೆದುಕೋ,” ಎಂದು ಹೇಳಿ ಗೇಹಜಿಯನ್ನು ಬಲವಂತ ಮಾಡಿದನು. ಹಾಗೆಯೇ ಆರು ಸಾವಿರ ಬೆಳ್ಳಿ ನಾಣ್ಯಗಳನ್ನು ಎರಡು ಚೀಲಗಳಲ್ಲಿ ಕಟ್ಟಿಸಿ, ಅದರ ಸಂಗಡ ಎರಡು ಜೊತೆ ಬಟ್ಟೆಗಳನ್ನು ಕೊಟ್ಟು, ತನ್ನ ಸೇವಕರಲ್ಲಿ ಇಬ್ಬರ ಮೇಲೆ ಹೊರಿಸಿದನು. ಅವರು ಗೇಹಜಿಯ ಮುಂದೆ ಹೊತ್ತುಕೊಂಡು ಹೋದರು.</verse>
				<verse number="24">ಆದರೆ ಗೇಹಜಿಯು ಬೆಟ್ಟಕ್ಕೆ ಬಂದಾಗ, ಅವರ ಕೈಯಿಂದ ಅವುಗಳನ್ನು ತೆಗೆದುಕೊಂಡು ಮನೆಯಲ್ಲಿಟ್ಟು, ಆ ಮನುಷ್ಯರನ್ನು ಕಳುಹಿಸಿಬಿಟ್ಟದ್ದರಿಂದ ಅವರು ಹೊರಟು ಹೋದರು.</verse>
				<verse number="25">ಆಗ ಗೇಹಜಿಯು ಒಳಗೆ ಪ್ರವೇಶಿಸಿ, ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದೆ?” ಎಂದನು. ಅದಕ್ಕೆ ಗೇಹಜಿಯು, “ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ,” ಎಂದನು.</verse>
				<verse number="26">ಆದರೆ ಎಲೀಷನು ಅವನಿಗೆ, “ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ, ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ಹಣವನ್ನೂ, ವಸ್ತ್ರಗಳನ್ನೂ, ದ್ರವ್ಯವನ್ನೂ, ಹಿಪ್ಪೆಯ ತೋಪುಗಳನ್ನೂ, ದ್ರಾಕ್ಷಿಯ ತೋಟಗಳನ್ನೂ, ಕುರಿದನಗಳನ್ನೂ, ದಾಸದಾಸಿಯರನ್ನೂ ಪಡೆದುಕೊಳ್ಳುವುದಕ್ಕೆ ಇದು ಸಮಯವೋ?</verse>
				<verse number="27">ನಾಮಾನನ ಕುಷ್ಠರೋಗವು ನಿನಗೂ, ನಿನ್ನ ಸಂತಾನಕ್ಕೂ ನಿತ್ಯವಾಗಿ ಇರುವುದು,” ಎಂದನು. ಆಗ ಗೇಹಜಿಯು ಹಿಮದಂತೆ ಬಿಳುಪಾಗಿ, ಕುಷ್ಠರೋಗಿ ಆಗಿ ಎಲೀಷನಿಂದ ಹೊರಟುಹೋದನು.</verse>
			</chapter>
			<chapter number="6">
				<verse number="1">ಪ್ರವಾದಿಗಳ ಮಂಡಳಿಯು ಎಲೀಷನಿಗೆ, “ಇಗೋ, ಈಗ ನಾವು ನಿನ್ನ ಸಂಗಡ ವಾಸವಾಗಿರುವ ಸ್ಥಳವು ನಮಗೆ ಇಕ್ಕಟ್ಟಾಗಿದೆ. ಅಪ್ಪಣೆಕೊಡು,</verse>
				<verse number="2">ನಾವು ಯೊರ್ದನಿನವರೆಗೂ ಹೋಗಿ, ಪ್ರತಿ ಮನುಷ್ಯನು ಅಲ್ಲಿಂದ ಒಂದೊಂದು ತೊಲೆಯನ್ನು ತೆಗೆದುಕೊಂಡು ಬಂದು, ವಾಸವಾಗಿರುವುದಕ್ಕೆ ನಮಗೋಸ್ಕರ ಒಂದು ಸ್ಥಳವನ್ನು ಅಲ್ಲಿ ಮಾಡುವೆವು,” ಎಂದರು. ಅವನು, “ಹೋಗಿರಿ,” ಎಂದನು.</verse>
				<verse number="3">ಆಗ ಅವರಲ್ಲಿ ಒಬ್ಬನು ಎಲೀಷನಿಗೆ, “ನೀವು ದಯಮಾಡಿ ನಿಮ್ಮ ಸೇವಕರ ಸಂಗಡ ಬರುವಿರಾ?” ಎಂದನು. ಅದಕ್ಕವನು, “ನಾನು ಬರುತ್ತೇನೆ,” ಎಂದನು.</verse>
				<verse number="4">ಹಾಗೆಯೇ ಅವನು ಅವರ ಸಂಗಡ ಹೋದನು. ಅವರು ಯೊರ್ದನ್ ನದಿಯ ಕಡೆಗೆ ಬಂದು ಅಲ್ಲಿ ಮರಗಳನ್ನು ಕಡಿದರು.</verse>
				<verse number="5">ಆದರೆ ಒಬ್ಬನು ಮರವನ್ನು ಬೀಳಿಸುವಾಗ ಕೊಡಲಿಯು ನೀರಿನೊಳಕ್ಕೆ ಬಿತ್ತು. ಆಗ ಅವನು, “ಅಯ್ಯೋ! ಯಜಮಾನನೇ, ನಾನು ಅದನ್ನು ಸಾಲವಾಗಿ ತೆಗೆದುಕೊಂಡದ್ದು,” ಎಂದು ಕೂಗಿ ಹೇಳಿದನು.</verse>
				<verse number="6">ದೇವರ ಮನುಷ್ಯನು, “ಅದು ಎಲ್ಲಿ ಬಿತ್ತು?” ಎಂದನು. ಅವನು ಎಲೀಷನಿಗೆ ಸ್ಥಳವನ್ನು ತೋರಿಸಿದ ತರುವಾಯ, ಎಲೀಷನು ಒಂದು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದ್ದರಿಂದ ಆ ಕಬ್ಬಿಣವು ತೇಲಿತು.</verse>
				<verse number="7">ಪ್ರವಾದಿಯು, “ನೀನು ತೆಗೆದುಕೋ,” ಎಂದನು. ಹಾಗೆಯೇ ಅವನು ತನ್ನ ಕೈಯನ್ನು ಚಾಚಿ ಅದನ್ನು ತೆಗೆದುಕೊಂಡನು.</verse>
				<verse number="8">ಅರಾಮ್ಯರ ಅರಸನು ಇಸ್ರಾಯೇಲಿನ ಮೇಲೆ ಯುದ್ಧ ಮಾಡುತ್ತಿದ್ದನು. ಇಂಥಿಂಥ ಸ್ಥಳದಲ್ಲಿ ತನ್ನ ದಂಡು ಇಳಿಯಬೇಕೆಂದು ತನ್ನ ಸೇವಕರ ಸಂಗಡ ಯೋಚನೆ ಮಾಡಿಕೊಂಡನು.</verse>
				<verse number="9">ಆಗ ದೇವರ ಮನುಷ್ಯನು ಇಸ್ರಾಯೇಲಿನ ಅರಸನಿಗೆ, “ಅಂಥಾ ಸ್ಥಳವನ್ನು ಹಾದುಹೋಗದೆ ಜಾಗ್ರತೆಯಾಗಿ ಇರು. ಏಕೆಂದರೆ ಅರಾಮ್ಯರು ಅಲ್ಲಿಗೆ ಇಳಿದು ಬಂದಿದ್ದಾರೆ,” ಎಂದು ಹೇಳಿ ಕಳುಹಿಸಿದನು.</verse>
				<verse number="10">ಹೀಗೆಯೇ ದೇವರ ಮನುಷ್ಯನು ತನ್ನನ್ನು ಎಚ್ಚರಿಸಿ, ತನಗೆ ಹೇಳಿದ ಸ್ಥಳಕ್ಕೆ ಇಸ್ರಾಯೇಲಿನ ಅರಸನು ಹೇಳಿ ಕಳುಹಿಸಿ, ತನ್ನ ಸೈನ್ಯವನ್ನು ಕರೆಯಿಸಿಕೊಂಡನು. ಹೀಗೆ ಅವನು ಹಲವು ಸಾರಿ ತಪ್ಪಿಸಿಕೊಂಡನು.</verse>
				<verse number="11">ಆದ್ದರಿಂದ ಅರಾಮ್ಯರ ಅರಸನ ಹೃದಯವು ಇದರ ನಿಮಿತ್ತ ಕಳವಳಗೊಂಡು, ಅವನು ತನ್ನ ಸೇವಕರನ್ನು ಕರೆದು ಅವರಿಗೆ, “ನಮ್ಮಲ್ಲಿ ಇಸ್ರಾಯೇಲಿನ ಅರಸನ ಕಡೆಯವನು ಯಾರು? ನೀವು ನನಗೆ ತಿಳಿಸುವುದಿಲ್ಲವೋ?” ಎಂದನು.</verse>
				<verse number="12">ಅವನ ಸೇವಕರಲ್ಲಿ ಒಬ್ಬನು, “ನನ್ನ ಒಡೆಯನೇ, ಅರಸನೇ, ಯಾವನೂ ಇಲ್ಲ. ಆದರೆ ಇಸ್ರಾಯೇಲಿನಲ್ಲಿರುವ ಪ್ರವಾದಿಯಾದ ಎಲೀಷನು ನಿನ್ನ ಮಲಗುವ ಕೋಣೆಯಲ್ಲಿ ನೀನು ಹೇಳುವ ಮಾತುಗಳನ್ನು ಸಹ ಇಸ್ರಾಯೇಲಿನ ಅರಸನಿಗೆ ಹೇಳುತ್ತಾನೆ,” ಎಂದನು.</verse>
				<verse number="13">ಆಗ ಅರಾಮ್ಯರ ಅರಸನು, “ನಾನು ಅವನನ್ನು ಹಿಡಿಯುವ ಹಾಗೆ ನೀವು ಹೋಗಿ ಅವನು ಎಲ್ಲಿದ್ದಾನೋ ನೋಡಿರಿ,” ಎಂದನು. ಅವನು ದೋತಾನಿನಲ್ಲಿದ್ದಾನೆಂದು ಅವನಿಗೆ ತಿಳಿಸಿದರು.</verse>
				<verse number="14">ಆದ್ದರಿಂದ ಅರಾಮ್ಯರ ಅರಸನು ಅಲ್ಲಿಗೆ ಕುದುರೆಗಳನ್ನೂ ರಥಗಳನ್ನೂ ಮಹಾಸೈನ್ಯವನ್ನೂ ಕಳುಹಿಸಿದನು. ಅವರು ರಾತ್ರಿಯಲ್ಲಿ ಬಂದು ಪಟ್ಟಣವನ್ನು ಸುತ್ತಿಕೊಂಡರು.</verse>
				<verse number="15">ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ, ಕುದುರೆಗಳೂ ರಥಗಳೂ ಉಳ್ಳ ಸೈನ್ಯ ಪಟ್ಟಣವನ್ನು ಸುತ್ತಿಕೊಂಡಿರುವುದನ್ನು ಕಂಡು ಎಲೀಷನಿಗೆ, “ಅಯ್ಯೋ! ನನ್ನ ಯಜಮಾನನೇ, ನಾವು ಏನು ಮಾಡುವುದು?” ಎಂದನು.</verse>
				<verse number="16">ಆದರೆ ಪ್ರವಾದಿಯು, “ಭಯಪಡಬೇಡ. ಅವರ ಸಂಗಡ ಇರುವವರಿಗಿಂತ ನಮ್ಮ ಕಡೆ ಇರುವವರು ಹೆಚ್ಚಾಗಿದ್ದಾರೆ,” ಎಂದನು.</verse>
				<verse number="17">ಆಗ ಎಲೀಷನು, “ಯೆಹೋವ ದೇವರೇ, ನೀವು ದಯಮಾಡಿ ಇವನು ಕಾಣುವ ಹಾಗೆ ಇವನ ಕಣ್ಣುಗಳನ್ನು ತೆರೆಯಿರಿ,” ಎಂದು ಪ್ರಾರ್ಥಿಸಿದನು. ಯೆಹೋವ ದೇವರು ಆ ಯುವ ಸೇವಕನ ಕಣ್ಣುಗಳನ್ನು ತೆರೆದಾಗ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ರಥಗಳೂ, ಕುದುರೆಗಳೂ ತುಂಬಿರುವುದನ್ನು ಅವನು ಕಂಡನು.</verse>
				<verse number="18">ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು, “ಯೆಹೋವ ದೇವರೇ, ನೀವು ದಯಮಾಡಿ ಈ ಜನರನ್ನು ಕುರುಡರನ್ನಾಗಿ ಮಾಡಿರಿ,” ಎಂದು ಪ್ರಾರ್ಥಿಸಿದನು. ಎಲೀಷನ ಮಾತಿನ ಹಾಗೆಯೇ ದೇವರು ಅವರನ್ನು ಕುರುಡರನ್ನಾಗಿ ಮಾಡಿದರು.</verse>
				<verse number="19">ಆಗ ಎಲೀಷನು ಅವರಿಗೆ, “ಇದು ಆ ಮಾರ್ಗವಲ್ಲ, ಇದು ಆ ಪಟ್ಟಣವಲ್ಲ, ನನ್ನ ಹಿಂದೆ ಬನ್ನಿರಿ. ನೀವು ಹುಡುಕುವ ಮನುಷ್ಯರ ಬಳಿಗೆ ನಿಮ್ಮನ್ನು ಬರಮಾಡುವೆನು,” ಎಂದು ಹೇಳಿ ಅವರನ್ನು ಸಮಾರ್ಯಕ್ಕೆ ನಡೆಸಿದನು.</verse>
				<verse number="20">ಅವರು ಸಮಾರ್ಯಕ್ಕೆ ಬಂದಾಗ, ಎಲೀಷನು, “ಯೆಹೋವ ದೇವರೇ, ಇವರು ಕಾಣುವಂತೆ ಇವರ ಕಣ್ಣುಗಳನ್ನು ತೆರೆಯಿರಿ,” ಎಂದನು. ಆಗ ಯೆಹೋವ ದೇವರು ಅವರ ಕಣ್ಣುಗಳನ್ನು ತೆರೆದರು. ಅವರು ನೋಡಿದಾಗ ಸಮಾರ್ಯದ ಮಧ್ಯದಲ್ಲಿದ್ದರು.</verse>
				<verse number="21">ಇಸ್ರಾಯೇಲಿನ ಅರಸನು ಅವರನ್ನು ಕಂಡಾಗ ಎಲೀಷನಿಗೆ, “ನನ್ನ ತಂದೆಯೇ, ನಾನು ಸಂಹರಿಸಲೋ, ಸಂಹರಿಸಲೋ?” ಎಂದನು.</verse>
				<verse number="22">ಅದಕ್ಕವನು, “ಸಂಹರಿಸಬೇಡ. ನೀನು ನಿನ್ನ ಖಡ್ಗದಿಂದಲೂ ನಿನ್ನ ಬಿಲ್ಲಿನಿಂದಲೂ ಸೆರೆಯಾಗಿ ತೆಗೆದುಕೊಳ್ಳದವರನ್ನು ಹೊಡೆಯುತ್ತೀಯೋ? ರೊಟ್ಟಿಯನ್ನೂ, ನೀರನ್ನೂ ಇವರ ಮುಂದೆ ಇಡು. ಅವರು ತಿಂದು ಕುಡಿದು ತಮ್ಮ ಯಜಮಾನನ ಬಳಿಗೆ ಹೋಗಲಿ,” ಎಂದನು.</verse>
				<verse number="23">ಆಗ ಅವರಿಗೋಸ್ಕರ ದೊಡ್ಡ ಔತಣ ಮಾಡಿಸಿದನು. ಅವರು ತಿಂದು ಕುಡಿದ ತರುವಾಯ ಅವರನ್ನು ಕಳುಹಿಸಿಬಿಟ್ಟನು. ಅವರು ತಮ್ಮ ಯಜಮಾನನ ಬಳಿಗೆ ಹೋದರು. ಅರಾಮ್ಯರ ದಂಡುಗಳು ಇಸ್ರಾಯೇಲ್ ದೇಶದ ಮೇಲೆ ಮತ್ತೆ ದಾಳಿಮಾಡಲಿಲ್ಲ.</verse>
				<verse number="24">ಸ್ವಲ್ಪ ಸಮಯದ ನಂತರ, ಅರಾಮಿನ ಅರಸ ಬೆನ್ಹದದನು ತನ್ನ ಸಮಸ್ತ ಸೈನ್ಯವನ್ನು ಕೂಡಿಸಿಕೊಂಡು ಹೊರಟುಹೋಗಿ, ಸಮಾರ್ಯವನ್ನು ಮುತ್ತಿಗೆಹಾಕಿದನು.</verse>
				<verse number="25">ಆಗ ಸಮಾರ್ಯದಲ್ಲಿ ದೊಡ್ಡ ಬರವಿತ್ತು. ಒಂದು ಕತ್ತೆಯ ತಲೆಯು ಎಂಬತ್ತು ಶೆಕೆಲ್ ಬೆಳ್ಳಿಗೆ, ಸುಮಾರು ನೂರು ಗ್ರಾಂ ಪಾರಿವಾಳದ ಗೊಬ್ಬರವನ್ನು ಐದು ಶೆಕೆಲ್ ಬೆಳ್ಳಿಗೆ ಮಾರಲಾಗುವವರೆಗೂ ಅದನ್ನು ಮುತ್ತಿಗೆಹಾಕಿದನು.</verse>
				<verse number="26">ಇಸ್ರಾಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ, ಒಬ್ಬ ಸ್ತ್ರೀಯು ಅವನನ್ನು ಕೂಗಿ, “ನನ್ನ ಯಜಮಾನನೇ, ಅರಸನೇ, ಸಹಾಯ ಮಾಡಿ,” ಎಂದಳು.</verse>
				<verse number="27">ಅದಕ್ಕವನು, “ಯೆಹೋವ ದೇವರು ನಿನಗೆ ಸಹಾಯ ಮಾಡದೆ ಹೋದರೆ, ನಾನು ಎಲ್ಲಿಂದ ನಿನಗೆ ಸಹಾಯ ಮಾಡಲಿ? ಕಣದಿಂದಲೋ, ದ್ರಾಕ್ಷಿ ಆಲೆಯಿಂದಲೋ?” ಎಂದನು.</verse>
				<verse number="28">ಅರಸನು ಅವಳಿಗೆ, “ನಿನ್ನ ದುಃಖವೇನು?” ಎಂದನು. ಅದಕ್ಕವಳು, “ಈ ಸ್ತ್ರೀಯು ನನಗೆ ಹೇಳಿದ್ದೇನೆಂದರೆ, ‘ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವಂತೆ ಅವನನ್ನು ಕೊಡು, ನಾಳೆ ನನ್ನ ಮಗನನ್ನು ತಿನ್ನೋಣ,’ ಎಂದಳು.</verse>
				<verse number="29">ಹಾಗೆಯೇ ನಾವು ನನ್ನ ಮಗನನ್ನು ಬೇಯಿಸಿ ಅವನನ್ನು ತಿಂದೆವು. ಮಾರನೆಯ ದಿವಸದಲ್ಲಿ ನಾನು ಅವಳಿಗೆ, ‘ನಾವು ನಿನ್ನ ಮಗನನ್ನು ತಿನ್ನುವಂತೆ ಅವನನ್ನು ಕೊಡು,’ ಎಂದೆನು. ಆದರೆ ಅವಳು ತನ್ನ ಮಗನನ್ನು ಬಚ್ಚಿಟ್ಟಿದ್ದಾಳೆ,” ಎಂದಳು.</verse>
				<verse number="30">ಅರಸನು ಆ ಸ್ತ್ರೀಯು ಹೇಳಿದ ಮಾತುಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಡೆಯ ಮೇಲೆ ಹಾದುಹೋದನು. ಜನರು ಕಂಡಾಗ ಅವನ ಮೈಮೇಲೆ ಗೋಣಿತಟ್ಟು ಇತ್ತು.</verse>
				<verse number="31">ಆಗ ಅವನು, “ಶಾಫಾಟನ ಮಗ ಎಲೀಷನ ತಲೆಯನ್ನು ಹಾರಿಸದಿದ್ದರೆ, ದೇವರು ನನಗೆ ಇದರಂತೆಯೂ ಇನ್ನೂ ಹೆಚ್ಚಾಗಿಯೂ ಮಾಡಲಿ,” ಎಂದನು.</verse>
				<verse number="32">ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ದೂತನನ್ನು ಕಳುಹಿಸಿದನು. ಅವನು ಇನ್ನೂ ಸ್ವಲ್ಪ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ದೂತನನ್ನು ಕಳುಹಿಸಿದ್ದಾನೆ. ದೂತನು ಇಲ್ಲಿಗೆ ಬಂದ ಕೂಡಲೇ ನೀವು ಬಾಗಿಲನ್ನು ಮುಚ್ಚಿ, ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲಿನ ಸಪ್ಪಳ ಕೇಳಿಸುತ್ತಿದೆಯಲ್ಲವೇ?” ಎಂದು ಹೇಳಿದನು.</verse>
				<verse number="33">ಎಲೀಷನು ಅವರೊಡನೆ ಮಾತನಾಡುತ್ತಿರುವಾಗಲೇ ಆ ದೂತನೂ ಅವನ ಹಿಂದಿನಿಂದ ಅರಸನೂ ಅಲ್ಲಿಗೆ ಬಂದರು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಯೆಹೋವ ದೇವರಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಅವರನ್ನು ನಂಬಿ ನಿರೀಕ್ಷಿಸಿಕೊಂಡಿರಬೇಕು?” ಎಂದನು.</verse>
			</chapter>
			<chapter number="7">
				<verse number="1">ಆಗ ಎಲೀಷನು, “ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಿಲಲ್ಲಿ ಮೂರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೆ ಮತ್ತು ಆರು ಕಿಲೋಗ್ರಾಂ ಜವೆಗೋಧಿ ಒಂದು ಬೆಳ್ಳಿ ನಾಣ್ಯಕ್ಕೆ ಮಾರಲಾಗುವುದು,” ಎಂದನು.</verse>
				<verse number="2">ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಉತ್ತರವಾಗಿ, “ಇಗೋ, ಯೆಹೋವ ದೇವರು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೆ, ಈ ಕಾರ್ಯ ಸಂಭವಿಸುವುದೋ?” ಎಂದನು. ಅದಕ್ಕವನು, “ನೀನು ನಿನ್ನ ಕಣ್ಣುಗಳಿಂದ ಅದನ್ನು ನೋಡುವೆ, ಆದರೆ ಅದರಲ್ಲಿ ಯಾವುದನ್ನೂ ತಿನ್ನುವುದಿಲ್ಲ,” ಎಂದನು.</verse>
				<verse number="3">ಆಗ ಊರು ಬಾಗಿಲ ದ್ವಾರದಲ್ಲಿ ನಾಲ್ಕು ಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರು, “ನಾವು ಸಾಯುವವರೆಗೂ ಇಲ್ಲಿ ಕುಳಿತುಕೊಂಡಿರುವುದೇನು?</verse>
				<verse number="4">ನಾವು ಇಲ್ಲಿಯೇ ಇದ್ದರೆ, ಪಟ್ಟಣದಲ್ಲಿ ಬರವಿರುವುದರಿಂದ ಅಲ್ಲಿ ಸಾಯುತ್ತೇವೆ. ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯುತ್ತೇವೆ. ಆದ್ದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಅವರಿಗೆ ಶರಣಾಗೋಣ. ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಅವರು ನಮ್ಮನ್ನು ಕೊಲ್ಲುವುದಾದರೆ ಕೊಲ್ಲಲಿ,” ಎಂದುಕೊಂಡರು.</verse>
				<verse number="5">ಹಾಗೆಯೇ ಸಂಜೆಯಲ್ಲಿ ಎದ್ದು, ಅರಾಮ್ಯರ ಪಾಳೆಯಕ್ಕೆ ಹೋಗಲು ಅವರು ಅರಾಮ್ಯರ ಪಾಳೆಯದ ಅಂಚಿಗೆ ಬಂದಾಗ, ಅಲ್ಲಿ ಯಾರೂ ಇರಲಿಲ್ಲ.</verse>
				<verse number="6">ಏಕೆಂದರೆ ಯೆಹೋವ ದೇವರು ಪಾಳೆಯದಲ್ಲಿರುವ ಅರಾಮ್ಯರಿಗೆ ರಥಗಳ, ಕುದುರೆಗಳ ಮತ್ತು ಮಹಾ ಸೈನ್ಯದ ಶಬ್ದವೂ ಕೇಳಿಸುವಂತೆ ಮಾಡಿದ್ದರಿಂದ ಅವರು ಒಬ್ಬರಿಗೊಬ್ಬರು, “ಇಸ್ರಾಯೇಲಿನ ಅರಸನು ಹಿತ್ತಿಯರ ಅರಸರನ್ನೂ, ಈಜಿಪ್ಟಿನ ಅರಸರನ್ನೂ ನಮ್ಮ ಮೇಲೆ ದಾಳಿಮಾಡಲು ಅವರನ್ನು ಕೂಲಿಗೆ ಕರೆದಿದ್ದಾನೆ,” ಎಂದುಕೊಂಡರು.</verse>
				<verse number="7">ಅವರು ಸಂಜೆಯಲ್ಲಿ ಎದ್ದು ಪಾಳೆಯದಲ್ಲಿದ್ದ ಹಾಗೆ ತಮ್ಮ ಗುಡಾರಗಳನ್ನೂ, ತಮ್ಮ ಕುದುರೆಗಳನ್ನೂ, ತಮ್ಮ ಕತ್ತೆಗಳನ್ನೂ ಬಿಟ್ಟುಬಿಟ್ಟು ತಮ್ಮ ಪ್ರಾಣಕ್ಕೋಸ್ಕರ ಓಡಿಹೋಗಿದ್ದರು.</verse>
				<verse number="8">ಆ ಕುಷ್ಠರೋಗಿಗಳು ದಂಡಿನ ಅಂಚಿನವರೆಗೂ ಬಂದು ಒಂದು ಡೇರೆಯಲ್ಲಿ ಪ್ರವೇಶಿಸಿ, ಅಲ್ಲಿ ತಿಂದು ಕುಡಿದು ಅಲ್ಲಿದ್ದ ಬೆಳ್ಳಿಬಂಗಾರವನ್ನೂ, ವಸ್ತ್ರಗಳನ್ನೂ ತೆಗೆದುಕೊಂಡುಹೋಗಿ ಬಚ್ಚಿಟ್ಟರು. ತಿರುಗಿಬಂದು ಮತ್ತೊಂದು ಡೇರೆಯಲ್ಲಿ ಪ್ರವೇಶಿಸಿ, ಅಲ್ಲಿಂದಲೂ ಹಾಗೆಯೇ ತೆಗೆದುಕೊಂಡುಹೋಗಿ ಬಚ್ಚಿಟ್ಟರು.</verse>
				<verse number="9">ಅನಂತರ ಅವರು, “ಇದು ಶುಭವಾರ್ತೆಯ ದಿವಸ, ನಾವು ಇದನ್ನು ಪ್ರಕಟಿಸದಿರುವುದು ಒಳ್ಳೆಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ, ಶಿಕ್ಷೆಗೆ ಪಾತ್ರರಾಗಬಹುದು. ಆದ್ದರಿಂದ ಹೋಗಿ ಅರಮನೆಯವರಿಗೆ ಈ ಸಂಗತಿಯನ್ನು ತಿಳಿಸೋಣ,” ಎಂದು ಮಾತನಾಡಿಕೊಂಡರು.</verse>
				<verse number="10">ಹಾಗೆಯೇ ಅವರು ಬಂದು ಪಟ್ಟಣದ ಬಾಗಿಲು ಕಾಯುವವನನ್ನು ಕರೆದು ಅವನಿಗೆ, “ನಾವು ಅರಾಮ್ಯರ ಪಾಳೆಯಕ್ಕೆ ಹೋಗಿ ಬಂದೆವು, ಅಲ್ಲಿ ಯಾರೂ ಕಾಣಿಸಲಿಲ್ಲ, ಮನುಷ್ಯರ ಶಬ್ದವೇ ಕೇಳಿಸಲಿಲ್ಲ. ಕತ್ತೆ ಕುದುರೆಗಳನ್ನು ಅಲ್ಲಲ್ಲಿ ಕಟ್ಟಿಹಾಕಲಾಗಿತ್ತು ಡೇರೆಗಳು ಇದ್ದ ಹಾಗೆಯೇ ಇವೆ,” ಎಂದರು.</verse>
				<verse number="11">ಅವನು ಬಾಗಿಲು ಕಾಯುವವರನ್ನು ಕರೆದನು. ಅವರು ಒಳಗಿರುವ ಅರಸನ ಮನೆಯವರಿಗೆ ತಿಳಿಸಿದರು.</verse>
				<verse number="12">ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ, “ಅರಾಮ್ಯರ ಹಂಚಿಕೆಯನ್ನು ಹೇಳುತ್ತೇನೆ ಕೇಳಿ. ನಾವು ಹಸಿವೆಯಿಂದ ಸಾಯುವವರಾಗಿದ್ದೇವೆ ಎಂಬುದನ್ನು ಅವರು ಬಲ್ಲರು. ಆದ್ದರಿಂದ ಪಾಳೆಯವನ್ನು ಬಿಟ್ಟು ಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ. ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೇ ನಮ್ಮನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ.”</verse>
				<verse number="13">ಆಗ ಅವನ ಸೇವಕರಲ್ಲಿ ಒಬ್ಬನು ಉತ್ತರವಾಗಿ, “ಪಟ್ಟಣದಲ್ಲಿ ಉಳಿದಿರುವ ಕುದುರೆಗಳಲ್ಲಿ ಐದು ಕುದುರೆಗಳನ್ನು ಕೆಲವರು ತೆಗೆದುಕೊಂಡು ಹೋಗಲಿ. ಅವು ಇಸ್ರಾಯೇಲಿನ ಸಮಸ್ತ ಸಮೂಹದಲ್ಲಿ ಉಳಿದವುಗಳ ಹಾಗೆ ಇವೆ. ಅಂದರೆ ಇಸ್ರಾಯೇಲಿನ ಸಮಸ್ತ ಗುಂಪಿನಲ್ಲಿ ನಾಶವಾಗದೆ ಉಳಿದವುಗಳಂತಿವೆ, ನಾವು ಕಳುಹಿಸಿ ನೋಡೋಣ,” ಎಂದನು.</verse>
				<verse number="14">ಆದ್ದರಿಂದ ಅವರು ಎರಡು ಜೋಡಿ ಕುದುರೆಗಳೊಂದಿಗೆ ಎರಡು ರಥಗಳನ್ನು ಆರಿಸಿಕೊಂಡರು ಮತ್ತು ಅರಸನು ಅರಾಮ್ಯರ ಸೈನ್ಯದ ಹಿಂದೆ ಅವರನ್ನು ಕಳುಹಿಸಿ, “ಹೋಗಿ ಏನಾಯಿತು ಎಂದು ತಿಳಿದುಕೊಳ್ಳಿ” ಎಂದು ಅವನು ರಾಹುತರಿಗೆ ಆಜ್ಞಾಪಿಸಿದನು.</verse>
				<verse number="15">ಅವರು ಅವರ ಹಿಂದೆ ಯೊರ್ದನಿನವರೆಗೆ ಹೋದರು. ಮಾರ್ಗದಲ್ಲೆಲ್ಲಾ ಅರಾಮ್ಯರು ಅವಸರದಿಂದ ಬಿಸಾಡಿದ ವಸ್ತ್ರಗಳೂ, ಪಾತ್ರೆಗಳೂ ತುಂಬಿದ್ದವು. ದೂತರು ತಿರುಗಿಬಂದು ಅರಸನಿಗೆ ತಿಳಿಸಿದರು.</verse>
				<verse number="16">ಆಗ ಜನರು ಹೊರಟುಹೋಗಿ ಅರಾಮ್ಯರ ಡೇರೆಗಳನ್ನು ಸುಲಿದುಕೊಂಡರು. ಆದ್ದರಿಂದ ಯೆಹೋವ ದೇವರ ವಾಕ್ಯದ ಪ್ರಕಾರವೇ ಮೂರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೂ, ಆರು ಕಿಲೋಗ್ರಾಂ ಜವೆಗೋಧಿಯು ಒಂದು ಬೆಳ್ಳಿ ನಾಣ್ಯಕ್ಕೂ ಮಾರಲಾಯಿತು.</verse>
				<verse number="17">ಆದರೆ ಅರಸನಿಗೆ ಹಸ್ತಕನಾದ ಆ ಅಧಿಕಾರಿಯನ್ನು ಅರಸನು ಪಟ್ಟಣದ ಬಾಗಿಲಿನ ಕಾವಲಿಗೆ ನೇಮಿಸಿದ್ದನು. ಅರಸನು ದೇವರ ಮನುಷ್ಯನ ಬಳಿಗೆ ಬಂದಾಗ, ದೇವರ ಮನುಷ್ಯನು ಹೇಳಿದ್ದ ಪ್ರಕಾರವೇ ಜನರು ಆ ಅಧಿಕಾರಿಯನ್ನು ಪಟ್ಟಣದ ಬಾಗಿಲಲ್ಲಿ ತುಳಿದುಹಾಕಿದ್ದರಿಂದ ಅವನು ಮರಣಹೊಂದಿದನು.</verse>
				<verse number="18">ಹಾಗೆಯೇ, “ಆರು ಕಿಲೋಗ್ರಾಂ ನಯವಾದ ಗೋಧಿಹಿಟ್ಟು ಒಂದು ಬೆಳ್ಳಿ ನಾಣ್ಯಕ್ಕೆ ಮತ್ತು ಜವೆಗೋಧಿ ಹನ್ನೆರಡು ಕಿಲೋಗ್ರಾಂ ಒಂದು ಬೆಳ್ಳಿ ನಾಣ್ಯಕ್ಕೆ ನಾಳೆ ಇಷ್ಟು ಹೊತ್ತಿಗೆ ಸಮಾರ್ಯ ಪಟ್ಟಣದ ಬಾಗಿಲಿನಲ್ಲಿ ಮಾರಲಾಗುವುದು,” ಎಂದು ದೇವರ ಮನುಷ್ಯನು ಅರಸನಿಗೆ ಹೇಳಿದ ಪ್ರಕಾರವೇ ಸಂಭವಿಸಿತು.</verse>
				<verse number="19">ಆ ಅಧಿಕಾರಿ ದೇವರ ಮನುಷ್ಯನಿಗೆ ಉತ್ತರವಾಗಿ, “ಇಗೋ, ಯೆಹೋವ ದೇವರು ಆಕಾಶದಲ್ಲಿ ಕಿಟಕಿಗಳನ್ನು ಉಂಟುಮಾಡಿದರೂ, ಸಂಭವಿಸುವುದೋ?” ಎಂದು ನುಡಿದಿದ್ದನು. ಅದಕ್ಕವನು, “ಇಗೋ, ನೀನು ನಿನ್ನ ಕಣ್ಣುಗಳಿಂದ ನೋಡುವೆ, ಆದರೆ ನೀನು ಅದನ್ನು ತಿನ್ನುವುದಿಲ್ಲ,” ಎಂದು ಪ್ರವಾದಿಯು ಹೇಳಿದ್ದನು.</verse>
				<verse number="20">ಆ ಪ್ರಕಾರವೇ ಅವನಿಗೆ ಸಂಭವಿಸಿತು. ಬಾಗಿಲಲ್ಲಿ ಜನರು ಅವನನ್ನು ತುಳಿದಿದ್ದರಿಂದ ಅವನು ಮರಣಹೊಂದಿದನು.</verse>
			</chapter>
			<chapter number="8">
				<verse number="1">ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ನೀನು, ನಿನ್ನ ಮನೆಯವರು ಎದ್ದು ಎಲ್ಲಿ ಇಳಿದುಕೊಳ್ಳುವ ಸ್ಥಳ ಉಂಟೋ ಅಲ್ಲಿ ಹೋಗಿ ವಾಸಿಸಿರಿ. ಏಕೆಂದರೆ ಯೆಹೋವ ದೇವರು ಬರವನ್ನು ಕಳುಹಿಸಲಿದ್ದಾರೆ. ಅದು ದೇಶದ ಮೇಲೆ ಏಳು ವರ್ಷದವರೆಗೂ ಬರುವುದು,” ಎಂದು ಹೇಳಿದನು.</verse>
				<verse number="2">ಆಗ ಆ ಸ್ತ್ರೀಯು ಎದ್ದು ದೇವರ ಮನುಷ್ಯನ ಮಾತಿನ ಪ್ರಕಾರವೇ ಮಾಡಿ, ತನ್ನ ಮನೆಯವರ ಸಂಗಡ ಹೋಗಿ ಫಿಲಿಷ್ಟಿಯರ ದೇಶದಲ್ಲಿ ಏಳು ವರ್ಷ ವಾಸವಾಗಿದ್ದಳು.</verse>
				<verse number="3">ಏಳು ವರ್ಷ ಆದ ತರುವಾಯ, ಆ ಸ್ತ್ರೀಯು ಫಿಲಿಷ್ಟಿಯರ ದೇಶವನ್ನು ಬಿಟ್ಟು ತಿರುಗಿಬಂದು ತನ್ನ ಹೊಲಮನೆಗಳಿಗೋಸ್ಕರ ಅರಸನಿಗೆ ಮೊರೆಯಿಟ್ಟಳು.</verse>
				<verse number="4">ಅರಸನು ದೇವರ ಮನುಷ್ಯನ ಸೇವಕನಾದ ಗೇಹಜಿಯ ಸಂಗಡ ಮಾತನಾಡಿ, “ಎಲೀಷನು ಮಾಡಿದ ಎಲ್ಲಾ ದೊಡ್ಡ ಕ್ರಿಯೆಗಳನ್ನು ನನಗೆ ವಿವರಿಸು,” ಎಂದು ಅವನಿಗೆ ಹೇಳಿದನು.</verse>
				<verse number="5">ಗೇಹಜಿಯು ಸತ್ತ ಹುಡುಗನನ್ನು ಹೇಗೆ ಎಲೀಷನು ಬದುಕಿಸಿದನೆಂದು ಅರಸನಿಗೆ ವಿವರವಾಗಿ ಹೇಳುತ್ತಿರುವಾಗಲೇ, ಎಲೀಷನು ಬದುಕಿಸಿದ ಹುಡುಗನ ತಾಯಿಯು ತನ್ನ ಹೊಲಮನೆಗೋಸ್ಕರ, ಮೊರೆಯಿಡಲು ಅರಸನ ಬಳಿಗೆ ಬಂದಳು. ಕೂಡಲೆ ಗೇಹಜಿಯು, “ನನ್ನ ಒಡೆಯನೇ, ಅರಸನೇ, ಇವಳೇ ಆ ಸ್ತ್ರೀಯು, ಎಲೀಷನು ಬದುಕಿಸಿದ ಆ ಹುಡುಗನು ಇವನೇ,” ಎಂದನು.</verse>
				<verse number="6">ಅರಸನು ಆ ಸ್ತ್ರೀಯನ್ನು ವಿಚಾರಿಸಿದಾಗ, ಅವಳು ವಿವರವಾಗಿ ಹೇಳಿದಳು. ಆಗ ಅರಸನು ಅವಳಿಗಾಗಿ ಒಬ್ಬ ಅಧಿಕಾರಿಯನ್ನು ನೇಮಿಸಿ, ಅವನಿಗೆ, “ಅವಳಿಗೆ ಸೇರಿದ ಎಲ್ಲವನ್ನು, ಅವಳು ದೇಶವನ್ನು ಬಿಟ್ಟ ದಿನದಿಂದ ಇಂದಿನವರೆಗೆ ಅವಳಿಗೆ ಸಲ್ಲತಕ್ಕ ಆ ಹೊಲದ ಆದಾಯವನ್ನೆಲ್ಲಾ ಅವಳಿಗೆ ಕೊಡಿಸು,” ಎಂದನು.</verse>
				<verse number="7">ಅರಾಮಿನ ಅರಸನಾದ ಬೆನ್ಹದದನು ಅಸ್ವಸ್ಥನಾಗಿರುವಾಗ ಎಲೀಷನು ದಮಸ್ಕಕ್ಕೆ ಬಂದನು. “ದೇವರ ಮನುಷ್ಯನು ಇಲ್ಲಿಗೆ ಬಂದಿದ್ದಾನೆ,” ಎಂದು ಅವನಿಗೆ ತಿಳಿಸಲಾಯಿತು.</verse>
				<verse number="8">ಆಗ ಅರಸನು ಹಜಾಯೇಲನಿಗೆ, “ನೀನು ಕೈಯಲ್ಲಿ ಕಾಣಿಕೆಯನ್ನು ತೆಗೆದುಕೊಂಡುಹೋಗಿ ದೇವರ ಮನುಷ್ಯನನ್ನು ಎದುರುಗೊಂಡು, ಈ ವ್ಯಾಧಿಯಿಂದ ನಾನು ಗುಣವಾಗುವೆನೋ? ಎಂದು ಅವನಿಂದ ಯೆಹೋವ ದೇವರನ್ನು ವಿಚಾರಿಸು,” ಎಂದನು.</verse>
				<verse number="9">ಹಜಾಯೇಲನು ದಮಸ್ಕದಲ್ಲಿರುವ ಸಕಲ ಉತ್ತಮವಾದವುಗಳಲ್ಲಿ ನಲವತ್ತು ಒಂಟೆಗಳು ಹೊರುವಷ್ಟು ಕಾಣಿಕೆಗಳನ್ನು ತೆಗೆದುಕೊಂಡು, ಎಲೀಷನನ್ನು ಎದುರುಗೊಳ್ಳಲು ಹೋಗಿ, ಅವನ ಮುಂದೆ ಬಂದು ನಿಂತು, “ಅರಾಮಿನ ಅರಸನಾಗಿರುವ ನಿನ್ನ ಮಗ ಬೆನ್ಹದದನು, ‘ಈ ವ್ಯಾಧಿಯಿಂದ ಬದುಕುವೆನೋ?’ ಎಂದು ಕೇಳಲು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆ,” ಎಂದನು.</verse>
				<verse number="10">ಅದಕ್ಕೆ ಎಲೀಷನು, “ನೀನು ಹೋಗಿ ಅವನಿಗೆ, ನಿಜವಾಗಿಯೂ ಸ್ವಸ್ಥನಾಗುವೆ, ಎಂದು ಹೇಳು. ಆದರೆ ಅವನು ಸಾಯುವನೆಂದು ಯೆಹೋವ ದೇವರು ನನಗೆ ತೋರಿಸಿದ್ದಾರೆ,” ಎಂದನು.</verse>
				<verse number="11">ದೇವರ ಮನುಷ್ಯನಾದ ಎಲೀಷನು ಹಜಾಯೇಲನು ಮುಜುಗರಕ್ಕೆ ಒಳಗಾಗುವವರೆಗೂ ಅವನನ್ನು ದಿಟ್ಟಿಸಿ ನೋಡುತ್ತಿದ್ದನು. ನಂತರ ದೇವರ ಮನುಷ್ಯನು ಅಳತೊಡಗಿದನು.</verse>
				<verse number="12">ಆಗ ಹಜಾಯೇಲನು, “ನನ್ನ ಒಡೆಯನು ಅಳುವುದೇಕೆ?” ಎಂದನು. ಅದಕ್ಕವನು, “ಏಕೆಂದರೆ ಇಸ್ರಾಯೇಲರಿಗೆ ನೀನು ಮಾಡಲು ಹೋಗುವ ಕೇಡು ನನಗೆ ತಿಳಿದದೆ. ನೀನು ಅವರ ಕೋಟೆಗಳಿಗೆ ಬೆಂಕಿ ಹತ್ತಿಸಿ, ಅವರ ಯೌವನಸ್ಥರನ್ನು ಖಡ್ಗದಿಂದ ಕೊಂದು, ಅವರ ಕೂಸುಗಳನ್ನು ತುಂಡು ತುಂಡುಗಳಾಗಿ ಮಾಡಿ, ಅವರ ಗರ್ಭಿಣಿ ಸ್ತ್ರೀಯರನ್ನು ಸೀಳಿಬಿಡುವೆ,” ಎಂದ ಉತ್ತರಕೊಟ್ಟನು.</verse>
				<verse number="13">ಆದರೆ ಹಜಾಯೇಲನು, “ನಿಮ್ಮ ಸೇವಕನು ಕೇವಲ ನಾಯಿ, ಇಂಥಾ ಮಹಾ ಕೆಲಸವನ್ನು ಮಾಡುವುದಕ್ಕೆ ಹೇಗೆ ಸಾಧ್ಯ?” ಎಂದನು. ಎಲೀಷನು, “ನೀನು ಅರಾಮಿನ ಮೇಲೆ ಅರಸನಾಗುವೆ ಎಂದು ಯೆಹೋವ ದೇವರು ನನಗೆ ತಿಳಿಸಿದ್ದಾರೆ,” ಎಂದನು.</verse>
				<verse number="14">ಹಜಾಯೇಲನು ಎಲೀಷನನ್ನು ಬಿಟ್ಟು ಹೊರಟು ತನ್ನ ಯಜಮಾನನ ಬಳಿಗೆ ಬಂದನು. ಆಗ ಅವನು, “ಎಲೀಷನು ನಿನಗೆ ಏನು ಹೇಳಿದನು?” ಎಂದು ಕೇಳಿದ್ದಕ್ಕೆ ಹಜಾಯೇಲನು, “ನೀನು ನಿಜವಾಗಿ ಬದುಕುವೆ ಎಂದು ನನಗೆ ಹೇಳಿದನು,” ಎಂದನು.</verse>
				<verse number="15">ಆದರೆ ಮಾರನೆಯ ದಿವಸದಲ್ಲಿ, ಅವನು ದಪ್ಪ ಬಟ್ಟೆಯನ್ನು ತೆಗೆದುಕೊಂಡು ನೀರಿನಲ್ಲಿ ಅದ್ದಿ, ಅರಸನ ಮುಖದ ಮೇಲೆ ಹಾಕಿದ್ದರಿಂದ ಅವನು ಮರಣಹೊಂದಿದನು. ಹಜಾಯೇಲನು ಅವನಿಗೆ ಬದಲಾಗಿ ಅರಸನಾದನು.</verse>
				<verse number="16">ಅಹಾಬನ ಮಗನೂ ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ, ಯೆಹೂದದ ರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು.</verse>
				<verse number="17">ಅವನು ಆಳಲಾರಂಭಿಸಿದಾಗ, ಮೂವತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು.</verse>
				<verse number="18">ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದರಿಂದ ಅವನು ಅಹಾಬನ ಮನೆಯವರು ನಡೆದ ಹಾಗೆ ಇಸ್ರಾಯೇಲರ ಅರಸರ ಮಾರ್ಗವನ್ನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.</verse>
				<verse number="19">ಆದರೂ ಯೆಹೋವ ದೇವರು ಯೆಹೂದದ ರಾಜ್ಯವನ್ನು ನಾಶಮಾಡಲಿಲ್ಲ. “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂಬುದಾಗಿ ತಮ್ಮ ದಾಸನಾದ ದಾವೀದನಿಗೆ ಪ್ರಮಾಣ ಮಾಡಿದ ಕಾರಣ ಉಳಿಸಿದರು.</verse>
				<verse number="20">ಯೆಹೋರಾಮನ ದಿನಗಳಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿಬಿದ್ದು, ತಮ್ಮ ಅರಸನನ್ನು ತಾವೇ ನೇಮಿಸಿಕೊಂಡರು.</verse>
				<verse number="21">ಆದ್ದರಿಂದ ಯೆಹೋರಾಮನು ತನ್ನ ಬಳಿಯಲ್ಲಿದ್ದ ಎಲ್ಲಾ ರಥಬಲವನ್ನು ತೆಗೆದುಕೊಂಡು ಚಾಯೀರಿಗೆ ಹೋಗಿ, ರಾತ್ರಿಯಲ್ಲಿ ಎದ್ದು, ತನ್ನನ್ನೂ ತನ್ನ ರಥಗಳ ಅಧಿಪತಿಗಳನ್ನೂ ಎದೋಮ್ಯರನ್ನು ಸೋಲಿಸಿದನು. ಅವನ ಸೈನಿಕರು ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು.</verse>
				<verse number="22">ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಅದೇ ಕಾಲದಲ್ಲಿ ಲಿಬ್ನದವರೂ ಸ್ವತಂತ್ರರಾದರು.</verse>
				<verse number="23">ಯೆಹೋರಾಮನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="24">ಯೆಹೋರಾಮನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು.</verse>
				<verse number="25">ಅಹಾಬನ ಮಗನೂ ಇಸ್ರಾಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.</verse>
				<verse number="26">ಇವನು ಆಳಲು ಆರಂಭಿಸಿದಾಗ ಇಪ್ಪತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಒಂದು ವರ್ಷ ಆಳಿದನು. ಇವನ ತಾಯಿಯ ಹೆಸರು ಅತಲ್ಯಳು, ಅವಳು ಇಸ್ರಾಯೇಲಿನ ಅರಸನಾದ ಒಮ್ರಿಯ ಮೊಮ್ಮಗಳು.</verse>
				<verse number="27">ಇವನು ಅಹಾಬನ ಮನೆಯವರ ಮಾರ್ಗಗಳಲ್ಲಿ ನಡೆದು, ಅಹಾಬನ ಮನೆಯವರ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಏಕೆಂದರೆ ಇವನು ಅಹಾಬನ ಅಳಿಯನಾಗಿದ್ದನು.</verse>
				<verse number="28">ಅಹಜ್ಯನು ಅಹಾಬನ ಮಗ ಯೋರಾಮನ ಸಂಗಡ ಗಿಲ್ಯಾದಿನ ರಾಮೋತಿಗೆ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದು ಗಾಯಗೊಳಿಸಿದರು.</verse>
				<verse number="29">ಆದ್ದರಿಂದ ಅರಸನಾದ ಯೋರಾಮನು ಅರಾಮ್ಯ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ, ರಾಮೋತಿನಲ್ಲಿ ಅರಾಮ್ಯರು ತನ್ನನ್ನು ಹೊಡೆದ ಗಾಯಗಳನ್ನು ಗುಣಪಡಿಸಿಕೊಳ್ಳುವುದಕ್ಕೆ ಇಜ್ರೆಯೇಲ್ ಪಟ್ಟಣಕ್ಕೆ ತಿರುಗಿಹೋದನು. ಆಗ ಅಹಾಬನ ಮಗ ಯೋರಾಮನು ಇಜ್ರೆಯೇಲಿನಲ್ಲಿ ಅಸ್ವಸ್ಥನಾಗಿದ್ದುದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗ ಅಹಜ್ಯನು ಅವನನ್ನು ನೋಡಲು ಹೋದನು.</verse>
			</chapter>
			<chapter number="9">
				<verse number="1">ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಂಡಳಿಯಲ್ಲಿ ಒಬ್ಬನನ್ನು ಕರೆದು ಅವನಿಗೆ, “ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನ ರಾಮೋತಿಗೆ ಹೋಗು.</verse>
				<verse number="2">ನೀನು ಅಲ್ಲಿಗೆ ಸೇರಿದಾಗ ನಿಂಷಿಯ ಮಗನಾಗಿರುವ ಯೆಹೋಷಾಫಾಟನ ಮಗ ಯೇಹುವನ್ನು ಅಲ್ಲಿ ಕಂಡು, ಒಳಗೆ ಪ್ರವೇಶಿಸಿ, ಅವನನ್ನು ಅವರ ಸಹೋದರರ ಮಧ್ಯದಿಂದ ಎಬ್ಬಿಸಿ, ಒಳಗಿನ ಕೋಣೆಗೆ ಕರೆದುಕೊಂಡು ಹೋಗಿ,</verse>
				<verse number="3">ಎಣ್ಣೆಯ ಪಾತ್ರೆಯನ್ನು ತೆಗೆದುಕೊಂಡು, ಅವನ ತಲೆಯ ಮೇಲೆ ಹೊಯ್ದು, ಅವನಿಗೆ, ‘ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ, ಎಂದು ಯೆಹೋವ ದೇವರು ಹೇಳುತ್ತಾರೆ,’ ಎಂಬುದಾಗಿ ಹೇಳು. ಅನಂತರ ಕದವನ್ನು ತೆರೆದು ತಡಮಾಡದೆ ಓಡಿಹೋಗು,” ಎಂದನು.</verse>
				<verse number="4">ಹಾಗೆಯೇ ಯೌವನಸ್ಥನಾದ ಪ್ರವಾದಿಯು ಗಿಲ್ಯಾದಿನ ರಾಮೋತಿಗೆ ಹೋದನು.</verse>
				<verse number="5">ಅವನು ಅಲ್ಲಿ ಸೇರಿದಾಗ, ಅಲ್ಲಿ ಯೇಹುವು ಮತ್ತು ಸೈನ್ಯಾಧಿಪತಿಗಳು ಕುಳಿತುಕೊಂಡಿದ್ದರು. ಆಗ ಅವನು, “ಅಧಿಪತಿಯೇ, ನಿನಗೊಂದು ಮಾತು ಹೇಳುವುದಿದೆ,” ಎಂದನು. ಯೇಹುವು, “ನಮ್ಮಲ್ಲಿ ಯಾರಿಗೆ?” ಎಂದು ಕೇಳಿದನು. ಅವನು, “ಅಧಿಪತಿಯಾದ ನಿಮಗೇ ಹೇಳಬೇಕಾಗಿದೆ,” ಎಂದು ಉತ್ತರಕೊಟ್ಟನು.</verse>
				<verse number="6">ಯೇಹುವು ಎದ್ದು ಮನೆಯೊಳಕ್ಕೆ ಹೋದನು. ಆಗ ಪ್ರವಾದಿಯು ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ, “ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ಯೆಹೋವ ದೇವರ ಜನರಾದ ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆ.</verse>
				<verse number="7">ನಾನು ಪ್ರವಾದಿಗಳಾದ ನನ್ನ ಸೇವಕರ ರಕ್ತಕ್ಕೋಸ್ಕರವೂ ಈಜೆಬೆಲಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವಂತೆ ನೀನು ನಿನ್ನ ಯಜಮಾನನಾದ ಅಹಾಬನ ಮನೆಯನ್ನು ಸಂಹರಿಸಬೇಕು.</verse>
				<verse number="8">ಅಹಾಬನ ಮನೆಯೆಲ್ಲಾ ನಾಶವಾಗುವುದು. ಇಸ್ರಾಯೇಲಿನಲ್ಲಿ ಉಳಿದಿರುವ ಅಹಾಬನ ಗಂಡಸರಲ್ಲಿ ಸ್ವತಂತ್ರರಾಗಲಿ, ಗುಲಾಮರಾಗಲಿ ಎಲ್ಲರನ್ನೂ ತೆಗೆದುಹಾಕುವೆನು.</verse>
				<verse number="9">ಅಹಾಬನ ಮನೆಯನ್ನು ನೆಬಾಟನ ಮಗ ಯಾರೊಬ್ಬಾಮನ ಮನೆಯ ಹಾಗೆಯೂ ಅಹೀಯನ ಮಗ ಬಾಷನ ಮನೆಯ ಹಾಗೆಯೂ ಮಾಡುವೆನು.</verse>
				<verse number="10">ಇದಲ್ಲದೆ ಇಜ್ರೆಯೇಲ್ ಊರಿನ ಹೊಲದಲ್ಲಿ ನಾಯಿಗಳು ಈಜೆಬೆಲಳನ್ನು ತಿಂದುಬಿಡುವುವು; ಅವಳ ಶವವನ್ನು ಸಮಾಧಿಮಾಡಲು ಯಾವನೂ ಇರುವುದಿಲ್ಲ,” ಎಂದು ಹೇಳಿ ಬಾಗಿಲನ್ನು ತೆರೆದು ಓಡಿಹೋದನು.</verse>
				<verse number="11">ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಬಂದನು. ಅವರು ಅವನಿಗೆ, “ಶುಭವೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇನು?” ಎಂದರು. ಅವನು ಅವರಿಗೆ, “ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ,” ಎಂದನು.</verse>
				<verse number="12">ಅದಕ್ಕವರು, “ಅದು ಸುಳ್ಳು, ದಯಮಾಡಿ ನಮಗೆ ತಿಳಿಸು,” ಎಂದರು. ಆದ್ದರಿಂದ ಅವನು, “ಇಸ್ರಾಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇಕಿಸಿದ್ದೇನೆಂಬುದಾಗಿ ಯೆಹೋವ ದೇವರು ಹೇಳುತ್ತಾರೆಂದು ಹೀಗೆ ನನಗೆ ಹೇಳಿದನು,” ಎಂದನು.</verse>
				<verse number="13">ಆಗ ಅವರು ತ್ವರೆಪಟ್ಟು ಪ್ರತಿಯೊಬ್ಬರು ತಮ್ಮ ಹೊರ ಉಡುಪುಗಳನ್ನು ತೆಗೆದು, ಮೆಟ್ಟಿಲುಗಳ ಮೇಲೆ ಹಾಸಿ, ಇವನನ್ನು ಕುಳ್ಳಿರಿಸಿ, ತುತೂರಿಗಳನ್ನು ಊದಿ, “ಯೇಹುವು ಅರಸನಾಗಿದ್ದಾನೆ,” ಎಂದು ಆರ್ಭಟಿಸಿದರು.</verse>
				<verse number="14">ಹೀಗೆಯೇ ನಿಂಷಿಯ ಮಗ ಯೆಹೋಷಾಫಾಟನ ಮಗ ಯೇಹುವು ಯೋರಾಮನಿಗೆ ವಿರೋಧವಾಗಿ ಒಳಸಂಚು ಮಾಡಿದನು. ಅರಾಮ್ಯರ ಅರಸನಾದ ಹಜಾಯೇಲನ ನಿಮಿತ್ತ ಯೋರಾಮನೂ, ಸಮಸ್ತ ಇಸ್ರಾಯೇಲರೂ ಗಿಲ್ಯಾದಿನ ರಾಮೋತಿನಲ್ಲಿ ಕಾಯುತ್ತಿದ್ದರು.</verse>
				<verse number="15">ಆದರೆ ಅರಸನಾದ ಯೋರಾಮನು ಅರಾಮಿನ ಅರಸನಾದ ಹಜಾಯೇಲನ ಸಂಗಡ ಯುದ್ಧಮಾಡುವಾಗ, ಅರಾಮ್ಯರು ತನ್ನನ್ನು ಹೊಡೆದ ಗಾಯವನ್ನು ಸ್ವಸ್ಥಮಾಡಿಕೊಳ್ಳುವ ನಿಮಿತ್ತ ಇಜ್ರೆಯೇಲಿಗೆ ಹೋಗಿದ್ದನು. ಆಗ ಯೇಹುವು, “ನಿಮಗೆ ಮನಸ್ಸಿದ್ದರೆ ಇದನ್ನು ಇಜ್ರೆಯೇಲಿಗೆ ಹೋಗಿ ತಿಳಿಸಲು ಪಟ್ಟಣದಿಂದ ಯಾರೂ ತಪ್ಪಿಸಿಕೊಂಡು ಹೊರಡದೆ ಇರಲಿ,” ಎಂದನು.</verse>
				<verse number="16">ಯೇಹುವು ರಥದ ಮೇಲೆ ಏರಿ ಇಜ್ರೆಯೇಲಿಗೆ ಹೋದನು. ಏಕೆಂದರೆ ಯೋರಾಮನು ಅಲ್ಲಿ ವಿಶ್ರಾಂತಿಯಲ್ಲಿದ್ದನು. ಇದಲ್ಲದೆ ಯೋರಾಮನನ್ನು ನೋಡುವುದಕ್ಕೆ ಯೆಹೂದದ ಅರಸನಾದ ಅಹಜ್ಯನು ಅಲ್ಲಿಗೆ ಬಂದಿದ್ದನು.</verse>
				<verse number="17">ಇಜ್ರೆಯೇಲ್ ಪಟ್ಟಣದ ಗೋಪುರದಲ್ಲಿದ್ದ ಕಾವಲುಗಾರನು ಯೇಹುವಿನ ಗುಂಪಿನವರನ್ನು ಕಂಡು, “ಜನರ ಒಂದು ಗುಂಪು ಕಾಣಿಸುತ್ತಿದೆ,” ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು, “ನೀನು ಒಬ್ಬ ರಾಹುತನನ್ನು ಕರೆದು, ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಾರೋ ಇಲ್ಲವೋ ಎಂದು ಕೇಳುವುದಕ್ಕೆ ಕಳುಹಿಸು,” ಎಂಬುದಾಗಿ ಆಜ್ಞಾಪಿಸಿದನು.</verse>
				<verse number="18">ಒಬ್ಬ ರಾಹುತನು ಯೇಹುವನ್ನು ಎದುರುಗೊಂಡು, “ಅರಸನು, ‘ಶುಭವಾರ್ತೆ ಉಂಟೋ?’ ಎಂದು ಕೇಳುತ್ತಾನೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು? ನನ್ನ ಹಿಂದೆ ಬಾ,” ಎಂದನು. ಕಾವಲುಗಾರನು ಅರಸನಿಗೆ, “ರಾಹುತನು ಆ ಗುಂಪನ್ನು ಮುಟ್ಟಿದನು, ಆದರೆ ತಿರುಗಿ ಬರುವುದು ಕಾಣಿಸುವುದಿಲ್ಲ,” ಎಂದು ತಿಳಿಸಿದನು.</verse>
				<verse number="19">ಆಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು. ಇವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸನು, ‘ಶುಭವಾರ್ತೆ ಉಂಟೋ?’ ಎಂದು ಕೇಳುತ್ತಾನೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು? ನನ್ನ ಹಿಂದೆ ಬಾ,” ಎಂದನು.</verse>
				<verse number="20">ಆಗ ಕಾವಲುಗಾರನು, “ಇವನೂ ಅವರ ಬಳಿಗೆ ಹೋಗಿ ತಿರುಗಿ ಬರಲಿಲ್ಲ. ಇದಲ್ಲದೆ ರಥವನ್ನು ಓಡಿಸುವುದು ನಿಂಷಿಯ ಮಗನಾದ ಯೇಹುವು ಓಡಿಸುವ ಹಾಗಿದೆ, ಏಕೆಂದರೆ ಅವನು ಹುಚ್ಚನಂತೆ ಓಡಿಸುತ್ತಿದ್ದಾನೆ,” ಎಂದನು.</verse>
				<verse number="21">ಯೋರಾಮನು, “ನನ್ನ ರಥವನ್ನು ಸಿದ್ಧಮಾಡು,” ಎಂದನು. ಅವನ ರಥವು ಸಿದ್ಧವಾಯಿತು. ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ, ಯೆಹೂದದ ಅರಸನಾದ ಅಹಜ್ಯನೂ ಹೊರಟು, ಅವರವರು ತಮ್ಮ ತಮ್ಮ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು, ಇಜ್ರೆಯೇಲಿನವನಾದ ನಾಬೋತನಿಗೆ ಸಂಬಂಧಿಸಿದ ಸ್ಥಳದಲ್ಲಿ ಅವನನ್ನು ಸಂಧಿಸಿದರು.</verse>
				<verse number="22">ಯೋರಾಮನು ಯೇಹುವನ್ನು ಕಂಡಾಗ, “ಯೇಹುವೇ, ಸಮಾಧಾನದಿಂದ ಬಂದಿರುವೆಯೋ?” ಎಂದನು. ಅದಕ್ಕವನು, “ನಿನ್ನ ತಾಯಿಯಾದ ಈಜೆಬೆಲಳ ಜಾರತ್ವವೂ, ಅವಳ ಮಾಟಮಂತ್ರಗಳೂ ಅಧಿಕವಾಗಿರುವಾಗ ಸಮಾಧಾನವೆಲ್ಲಿ?” ಎಂದನು.</verse>
				<verse number="23">ಆಗ ಯೋರಾಮನು ಅಹಜ್ಯನಿಗೆ, “ಅಹಜ್ಯನೇ, ಇದು ದ್ರೋಹ!” ಎಂದು ಹೇಳಿ ತನ್ನ ಕೈ ತಿರುಗಿಸಿಕೊಂಡು ಓಡಿಹೋದನು.</verse>
				<verse number="24">ಆದರೆ ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬಗ್ಗಿಸಿ ತನ್ನ ಕೈಯಿಂದ ಯೋರಾಮನನ್ನು ಅವನ ತೋಳುಗಳ ನಡುವೆ ಹೊಡೆದನು. ಬಾಣ ಹೃದಯದಲ್ಲಿ ತೂರಿ ಹೊರಟಿತು. ಅವನು ರಥದಲ್ಲಿ ಕೆಳಗೆ ಮುದುರಿಕೊಂಡು ಬಿದ್ದನು.</verse>
				<verse number="25">ಆಗ ಯೇಹುವು ತನ್ನ ಅಧಿಪತಿಯಾದ ಬಿದ್ಕಾರನಿಗೆ, “ನೀನು ಅವನನ್ನು ತೆಗೆದುಕೊಂಡುಹೋಗಿ ಇಜ್ರೆಯೇಲಿನವನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು. ಏಕೆಂದರೆ ನಾನೂ, ನೀನೂ ಅವನ ತಂದೆಯಾದ ಅಹಾಬನ ಹಿಂದೆ ರಥವನ್ನು ಏರಿಕೊಂಡು ಹೋಗುತ್ತಿರುವಾಗ, ಯೆಹೋವ ದೇವರು ಈ ಪ್ರವಾದನೆಯನ್ನು ಅವನ ಬಗ್ಗೆ ತಿಳಿಸಿದರೆಂದು ಜ್ಞಾಪಕಮಾಡಿಕೋ.</verse>
				<verse number="26">ನಾಬೋತನ ರಕ್ತವನ್ನೂ, ಅವನ ಪುತ್ರರ ರಕ್ತವನ್ನೂ ನಿನ್ನೆ ನಾನು ನಿಶ್ಚಯವಾಗಿ ನೋಡಿದೆನಲ್ಲಾ, ಎಂದು ಯೆಹೋವ ದೇವರು ಹೇಳುತ್ತಾರೆ. ಇದಲ್ಲದೆ ಇದೇ ಹೊಲದಲ್ಲಿ ನಿನಗೆ ಮುಯ್ಯಿಗೆ ಮುಯ್ಯಿ ಕೊಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ಆದ್ದರಿಂದ ಯೆಹೋವ ದೇವರ ವಾಕ್ಯದ ಪ್ರಕಾರ ಎತ್ತಿಕೊಂಡು ಆ ಹೊಲದಲ್ಲಿ ಅವನನ್ನು ಹಾಕಿಬಿಡು,” ಎಂದನು.</verse>
				<verse number="27">ಯೆಹೂದದ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು, ಬೇತ್ ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನ ಹಿಂದೆ ಹೋಗಿ ರಥದಲ್ಲಿ, “ಅವನನ್ನು ಸಹ ಸಂಹರಿಸಿರಿ,” ಎಂದನು. ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಎಂಬ ಸ್ಥಳಕ್ಕೆ ಏರಿಹೋಗುವ ಅಹಜ್ಯನನ್ನು ಮಾರ್ಗದಲ್ಲಿ ರಥದಲ್ಲಿ ಹೊಡೆದರು. ಅವನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತುಹೋದನು.</verse>
				<verse number="28">ಅವನ ಸೇವಕರು ಅವನನ್ನು ರಥದಲ್ಲಿ ಯೆರೂಸಲೇಮಿಗೆ ತೆಗೆದುಕೊಂಡುಹೋಗಿ, ದಾವೀದನ ಪಟ್ಟಣದೊಳಗೆ ಅವನ ಪಿತೃಗಳ ಬಳಿಯಲ್ಲಿ ಅವನ ಸಮಾಧಿಯಲ್ಲಿ ಅವನನ್ನು ಹೂಳಿಟ್ಟರು.</verse>
				<verse number="29">ಅಹಾಬನ ಮಗ ಯೋರಾಮನ ಹನ್ನೊಂದನೆಯ ವರ್ಷದಲ್ಲಿ ಅಹಜ್ಯನು ಯೆಹೂದದ ಅರಸನಾಗಿದ್ದನು.</verse>
				<verse number="30">ಯೇಹುವು ಇಜ್ರೆಯೇಲಿಗೆ ಬಂದನು. ಅಲ್ಲಿಗೆ ಅವನು ಬಂದಿದ್ದಾನೆಂದು ಈಜೆಬೆಲಳು ಕೇಳಿ, ಅವಳು ತನ್ನ ಕಣ್ಣುಗಳಿಗೆ ಕಾಡಿಗೆ ಹಚ್ಚಿಕೊಂಡು, ತನ್ನ ತಲೆಯನ್ನು ಶೃಂಗರಿಸಿಕೊಂಡು, ಕಿಟಕಿಯಿಂದ ಇಣಿಕಿ ನೋಡಿದಳು.</verse>
				<verse number="31">ಯೇಹುವು ಬಾಗಿಲಲ್ಲಿ ಪ್ರವೇಶಿಸಿದಾಗ ಅವಳು, “ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾನನೇ, ಕ್ಷೇಮವೋ?” ಎಂದಳು.</verse>
				<verse number="32">ಯೇಹುವು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿ, “ನನ್ನ ಕಡೆ ಇರುವವರು ಯಾರು?” ಎಂದನು. ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿಯಲ್ಲಿಂದ ಅವನನ್ನು ನೋಡಿದರು.</verse>
				<verse number="33">ಯೇಹುವು, “ಅವಳನ್ನು ಕೆಳಕ್ಕೆ ತಳ್ಳಿಬಿಡಿರಿ,” ಎಂದನು. ಅವರು ಅವಳನ್ನು ಕೆಳಕ್ಕೆ ತಳ್ಳಿಬಿಟ್ಟದ್ದರಿಂದ ಅವಳ ರಕ್ತವು ಗೋಡೆಯ ಮೇಲೆಯೂ, ಕುದುರೆಗಳ ಮೇಲೆಯೂ ಸಿಡಿಯಿತು. ಯೇಹುವು ರಥವನ್ನು ಅವಳ ಮೇಲೆ ಓಡಿಸಿದನು.</verse>
				<verse number="34">ಯೇಹುವು ಒಳಗೆ ಹೋಗಿ ತಿಂದು ಕುಡಿದನು. ಆಮೇಲೆ ಅವರಿಗೆ, “ನೀವು ಹೋಗಿ ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ಕಂಡು, ಅವಳನ್ನು ಹೂಳಿಡಿರಿ. ಏಕೆಂದರೆ ಅವಳು ಅರಸನ ಮಗಳು,” ಎಂದನು.</verse>
				<verse number="35">ಅವರು ಅವಳನ್ನು ಹೂಳಿಡಲು ಹೋದಾಗ, ಅವಳ ತಲೆ ಬುರುಡೆಯೂ, ಕಾಲುಗಳೂ, ಅಂಗೈಗಳೂ ಹೊರತು ಮತ್ತೇನೂ ಕಾಣಲಿಲ್ಲ. ಆದ್ದರಿಂದ ಅವರು ತಿರುಗಿಬಂದು ಅವನಿಗೆ ತಿಳಿಸಿದರು.</verse>
				<verse number="36">ಅದಕ್ಕವನು, “ಯೆಹೋವ ದೇವರು ತಮ್ಮ ಸೇವಕನಾಗಿರುವ ತಿಷ್ಬೀಯನಾದ ಎಲೀಯನ ಮುಖಾಂತರ ಹೇಳಿದ ವಾಕ್ಯವು ಇದೇ: ಇಜ್ರೆಯೇಲ್ ಊರಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವುವು.</verse>
				<verse number="37">ಇದಲ್ಲದೆ ಇದೇ ಈಜೆಬೆಲಳೆಂದು ಗುರುತು ಸಿಕ್ಕದ ಹಾಗೆ ಇಜ್ರೆಯೇಲಿನ ಹೊಲದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವುದು,” ಎಂದನು.</verse>
			</chapter>
			<chapter number="10">
				<verse number="1">ಆಗ ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳು ಇದ್ದರು, ಯೇಹುವು ಸಮಾರ್ಯದಲ್ಲಿರುವ ಇಜ್ರೆಯೇಲ್ ಊರಿನ ಪ್ರಧಾನರಿಗೂ ಹಿರಿಯರಿಗೂ ಅಹಾಬನ ಮಕ್ಕಳನ್ನು ಪೋಷಿಸುವವರಿಗೂ ಪತ್ರಗಳನ್ನು ಬರೆದು, ಸಮಾರ್ಯಕ್ಕೆ ಕಳುಹಿಸಿದನು. ಅವನು,</verse>
				<verse number="2">“ನಿಮ್ಮ ಯಜಮಾನನ ಪುತ್ರರು ನಿಮ್ಮ ಬಳಿಯಲ್ಲಿ ಇದ್ದಾರೆ. ಇದಲ್ಲದೆ ರಥಗಳು, ಕುದುರೆಗಳು, ಕೋಟೆಗಳುಳ್ಳ ಪಟ್ಟಣ, ಆಯುಧಗಳು ನಿಮ್ಮ ಬಳಿಯಲ್ಲಿವೆ. ಆದ್ದರಿಂದ ಈ ಪತ್ರವು ನಿಮಗೆ ತಲುಪಿದ ತಕ್ಷಣ,</verse>
				<verse number="3">ನೀವು ನಿಮ್ಮ ಯಜಮಾನನ ಪುತ್ರರಲ್ಲಿ ಉತ್ತಮನಾಗಿರುವ ಮತ್ತು ಸಮರ್ಥನಾಗಿರುವವನನ್ನು ಆರಿಸಿಕೊಂಡು, ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕೂರಿಸಿ, ನಿಮ್ಮ ಯಜಮಾನನ ಕುಟುಂಬದವರಿಗಾಗಿ ಯುದ್ಧಮಾಡಿರಿ,” ಎಂದು ತಿಳಿಸಿದನು.</verse>
				<verse number="4">ಆದರೆ ಅವರು ತುಂಬಾ ಭಯಪಟ್ಟು, “ಇಬ್ಬರೂ ಅರಸರು ಅವನ ಮುಂದೆ ನಿಲ್ಲಲು ಸಾಧ್ಯವಾಗದಿದ್ದಾಗ, ನಾವು ನಿಲ್ಲುವುದು ಹೇಗೆ?” ಎಂದರು.</verse>
				<verse number="5">ಆಗ ಅರಮನೆಯ ಆಡಳಿತಾಧಿಕಾರಿ, ಪಟ್ಟಣದ ರಾಜ್ಯಪಾಲರು, ಹಿರಿಯರು ಮತ್ತು ಪಾಲಕರು ಈ ಸಂದೇಶವನ್ನು ಯೇಹುವಿನ ಬಳಿಗೆ ಕಳುಹಿಸಿ, “ನಾವು ನಿಮ್ಮ ಸೇವಕರು ನೀವು ನಮಗೆ ಹೇಳುವುದನ್ನೆಲ್ಲಾ ಮಾಡುತ್ತೇವೆ. ನಾವು ಯಾರನ್ನೂ ಅರಸನನ್ನಾಗಿ ನೇಮಿಸುವುದಿಲ್ಲ. ನಿಮ್ಮ ದೃಷ್ಟಿಗೆ ಒಳ್ಳೆಯದಾಗಿರುವುದನ್ನು ನೀವು ಮಾಡಿರಿ,” ಎಂದರು.</verse>
				<verse number="6">ಆಗ ಯೇಹುವು ಅವರಿಗೆ ಎರಡನೆಯ ಸಾರಿ ಪತ್ರವನ್ನು ಬರೆದು, “ನೀವು ನನ್ನವರಾಗಿದ್ದು ನನ್ನ ಮಾತು ಕೇಳುವವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ ಇಜ್ರೆಯೇಲ್ ಪಟ್ಟಣಕ್ಕೆ ನಿಮ್ಮ ಯಜಮಾನನ ಪುತ್ರರ ತಲೆಗಳನ್ನು ತೆಗೆದುಕೊಂಡು ನನ್ನ ಬಳಿಗೆ ಬನ್ನಿರಿ,” ಎಂದು ಹೇಳಿದನು. ಆದರೆ ಅರಸನ ಮಕ್ಕಳಾದ ಎಪ್ಪತ್ತು ಮಂದಿ ಮನುಷ್ಯರು ಪಟ್ಟಣದ ಪ್ರಮುಖರ ಬಳಿಯಲ್ಲಿ ಇದ್ದರು. ಅವರು ಅವರನ್ನು ಪೋಷಿಸುತ್ತಿದ್ದರು.</verse>
				<verse number="7">ಈ ಪತ್ರವು ಅವರ ಬಳಿಗೆ ಬಂದಾಗ, ಅವರು ರಾಜಪುತ್ರರನ್ನು ಹಿಡಿದು, ಎಪ್ಪತ್ತು ಮಂದಿಯನ್ನು ಕೊಂದು, ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಇಜ್ರೆಯೇಲ್ ಪಟ್ಟಣದಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.</verse>
				<verse number="8">ಆಗ ಆ ಸೇವಕನು ಬಂದು ಯೇಹುವಿಗೆ, “ರಾಜಪುತ್ರರ ತಲೆಗಳನ್ನು ತೆಗೆದುಕೊಂಡು ಬಂದಿದ್ದಾರೆ,” ಎಂದು ತಿಳಿಸಿದನು. ಅದಕ್ಕೆ ಯೇಹು, “ಉದಯಕಾಲದವರೆಗೂ ಅವುಗಳನ್ನು ಹೆಬ್ಬಾಗಿಲಿನಲ್ಲಿ ಎರಡು ರಾಶಿಗಳಾಗಿ ಹಾಕಿರಿ,” ಎಂದು ಆಜ್ಞಾಪಿಸಿದನು.</verse>
				<verse number="9">ಮರುದಿನ ಬೆಳಿಗ್ಗೆ ಯೇಹು ಹೊರಗೆ ಬಂದು, ಸಕಲ ಜನರ ಮುಂದೆ ನಿಂತು, “ನೀವು ನಿರಪರಾಧಿಗಳು. ನಾನು ನನ್ನ ಯಜಮಾನನ ಮೇಲೆ ಒಳಸಂಚುಮಾಡಿ, ಅವನನ್ನು ಕೊಂದುಹಾಕಿದೆನು. ಆದರೆ ಇವರೆಲ್ಲರನ್ನು ಸಂಹರಿಸಿದವರ‍್ಯಾರು?</verse>
				<verse number="10">ಯೆಹೋವ ದೇವರು ಅಹಾಬನ ಮನೆಯನ್ನು ಕುರಿತು ಹೇಳಿದ ಯೆಹೋವ ದೇವರ ಮಾತುಗಳಲ್ಲಿ ಒಂದೂ ವ್ಯರ್ಥವಾಗುವುದಿಲ್ಲವೆಂದು ನೀವು ತಿಳಿದುಕೊಳ್ಳಿರಿ. ಯೆಹೋವ ದೇವರು ತಮ್ಮ ಸೇವಕನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾರೆ,” ಎಂದನು.</verse>
				<verse number="11">ಈ ಪ್ರಕಾರ ಯೇಹುವು ಇಜ್ರೆಯೇಲ್ ಪಟ್ಟಣದಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ ಅವನ ಸರದಾರರು, ಆಪ್ತಮಿತ್ರರು, ಪುರೋಹಿತರು ಇವರನ್ನೂ ಸಂಹರಿಸಿದನು; ಒಬ್ಬನನ್ನೂ ಉಳಿಸಲಿಲ್ಲ.</verse>
				<verse number="12">ಆಗ ಯೇಹುವು ಹೊರಟು ಸಮಾರ್ಯಕ್ಕೆ ಬಂದನು. ಅವನು ಕುರುಬರ ಬೇತ್ ಎಕೆದ್ ಬಳಿ ಬಂದಾಗ,</verse>
				<verse number="13">ಯೆಹೂದದ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ, “ನೀವು ಯಾರು?” ಎಂದನು. ಅದಕ್ಕವರು, “ನಾವು ಅಹಜ್ಯನ ಸಹೋದರರು. ಅರಸನ ಮಕ್ಕಳನ್ನೂ, ರಾಣಿಯ ಮಕ್ಕಳನ್ನೂ ವಂದಿಸಲು ಹೋಗುತ್ತಿದ್ದೇವೆ,” ಎಂದರು.</verse>
				<verse number="14">ಆಗ ಅವನು, “ಅವರನ್ನು ಜೀವದಿಂದ ಹಿಡಿಯಿರಿ,” ಎಂದು ಹೇಳಿದ್ದರಿಂದ ಕುರುಬರು ಇವರನ್ನು ಜೀವದಿಂದ ಹಿಡಿದು, ಉಣ್ಣೆ ಕತ್ತರಿಸುವ ಮನೆಯ ಬಾವಿಯ ಬಳಿಯಲ್ಲಿ ಕೊಂದುಹಾಕಿದರು. ಅವರು ನಲವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನಾದರೂ ಉಳಿಸಲಿಲ್ಲ.</verse>
				<verse number="15">ಯೇಹುವು ಅಲ್ಲಿಂದ ಹೋಗಿ, ತನ್ನನ್ನು ಎದುರುಗೊಳ್ಳಲು ಬಂದ ರೇಕಾಬನ ಮಗ ಯೆಹೋನಾದಾಬನನ್ನು ಕಂಡು ಅವನನ್ನು ವಂದಿಸಿ ಅವನಿಗೆ, “ನನ್ನ ಹೃದಯವು ನಿನ್ನ ಹೃದಯದ ಸಂಗಡ ಇರುವ ಹಾಗೆ ನಿನ್ನ ಹೃದಯವು ಯಥಾರ್ಥವಾಗಿ ಇದೆಯೋ?” ಎಂದನು. ಯೆಹೋನಾದಾಬನು, “ಇದೆ,” ಎಂದನು. “ಹಾಗಾದರೆ ನಿನ್ನ ಕೈ ಕೊಡು,” ಎಂದನು. ಇವನು ತನ್ನ ಕೈ ಕೊಟ್ಟನು. ತನ್ನ ಬಳಿಗೆ ರಥದ ಮೇಲೆ ಹತ್ತಿಸಿಕೊಂಡು ಅವನಿಗೆ,</verse>
				<verse number="16">“ನೀನು ನನ್ನ ಸಂಗಡ ಬಂದು ಯೆಹೋವ ದೇವರಿಗೋಸ್ಕರ ನನಗುಂಟಾದ ಆಸಕ್ತಿಯನ್ನು ನೋಡು,” ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.</verse>
				<verse number="17">ಯೇಹುವು ಸಮಾರ್ಯಕ್ಕೆ ಬಂದ ತರುವಾಯ ಸಮಾರ್ಯದಲ್ಲಿ ಅಹಾಬನಿಗೆ ಉಳಿದವರೆಲ್ಲರನ್ನು ಎಲೀಯನಿಗೆ ಹೇಳಿದ ಯೆಹೋವ ದೇವರ ವಾಕ್ಯದ ಪ್ರಕಾರ ಅವರನ್ನು ಸಂಹರಿಸಿದನು.</verse>
				<verse number="18">ಯೇಹುವು ಜನರೆಲ್ಲರನ್ನು ಕೂಡಿಸಿ ಅವರಿಗೆ, “ಅಹಾಬನು ಸ್ವಲ್ಪವಾಗಿ ಬಾಳನನ್ನು ಸೇವಿಸಿದನು. ಆದರೆ ಯೇಹುವು ಅವನನ್ನು ಬಹಳವಾಗಿ ಸೇವಿಸುವನು.</verse>
				<verse number="19">ಆದ್ದರಿಂದ ಬಾಳನ ಸಮಸ್ತ ಪ್ರವಾದಿಗಳನ್ನೂ, ಅವನ ಸಮಸ್ತ ಸೇವಕರನ್ನೂ, ಅವನ ಸಮಸ್ತ ಯಾಜಕರನ್ನೂ ನನ್ನ ಬಳಿಗೆ ಕರೆಯಿರಿ. ಒಬ್ಬನೂ ಬಾರದೆ ಇರಕೂಡದು. ನಾನು ಬಾಳನಿಗೆ ಮಹಾಬಲಿ ಕೊಡಬೇಕಾಗಿದೆ. ಯಾವನಾದರೂ ಬಾರದೆ ಹೋದರೆ ಅವನು ಬದುಕನು,” ಎಂದನು. ಏಕೆಂದರೆ ಯೇಹುವು ಬಾಳನನ್ನು ಸೇವಿಸುವವರನ್ನು ನಾಶಮಾಡುವಂತೆ ಇದನ್ನು ತಂತ್ರದಿಂದ ಮಾಡಿದನು.</verse>
				<verse number="20">ಆಗ ಯೇಹುವು, “ಬಾಳನಿಗೋಸ್ಕರ ಪವಿತ್ರ ಸಮಾರಂಭವನ್ನು ಮಾಡಿರಿ,” ಎಂದನು. ಅವರು ಅದನ್ನು ಸಾರಿದರು.</verse>
				<verse number="21">ಯೇಹುವು ಇಸ್ರಾಯೇಲಿನಲ್ಲೆಲ್ಲಾ ಕಳುಹಿಸಿದ್ದರಿಂದ ಬಾಳನನ್ನು ಸೇವಿಸುವವರೆಲ್ಲರೂ ಬಂದರು. ಬಾರದೆ ಇದ್ದವನು ಒಬ್ಬನೂ ಇರಲಿಲ್ಲ. ಅವರು ಬಾಳನ ಮನೆಯಲ್ಲಿ ಪ್ರವೇಶಿಸಿದಾಗ, ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ಬಾಳನ ದೇವಸ್ಥಾನ ಪೂರ್ಣವಾಗಿ ತುಂಬಿತ್ತು.</verse>
				<verse number="22">ಆಗ ಅವನು ವಸ್ತ್ರಗಳ ಮನೆಯ ಮೇಲಧಿಕಾರಿಗೆ, “ಬಾಳನನ್ನು ಸೇವಿಸುವ ಸಮಸ್ತರಿಗೋಸ್ಕರ ವಸ್ತ್ರಗಳನ್ನು ತೆಗೆದುಕೊಂಡು ಬಾ,” ಎಂದು ಹೇಳಿದ್ದರಿಂದ, ಅವನು ಅವರಿಗೋಸ್ಕರ ವಸ್ತ್ರಗಳನ್ನು ತೆಗೆದುಕೊಂಡು ಬಂದನು.</verse>
				<verse number="23">ಆಗ ಯೇಹುವೂ, ರೇಕಾಬನ ಮಗ ಯೆಹೋನಾದಾಬನೂ ಬಾಳನ ದೇವಸ್ಥಾನದಲ್ಲಿ ಪ್ರವೇಶಿಸಿದರು. ಯೇಹುವು, “ಬಾಳನನ್ನು ಸೇವಿಸುವವರ ಹೊರತು ಅವರ ಸಂಗಡ ಯೆಹೋವ ದೇವರ ಸೇವಕರಲ್ಲಿ ಒಬ್ಬನೂ ಇರದ ಹಾಗೆ ಪರಿಶೋಧಿಸಿ ನೋಡಿರಿ,” ಎಂದು ಬಾಳನನ್ನು ಸೇವಿಸುವವರಿಗೆ ಹೇಳಿದನು.</verse>
				<verse number="24">ಅವರು ಬಲಿಗಳನ್ನೂ, ದಹನಬಲಿಗಳನ್ನೂ ಅರ್ಪಿಸಲು ಒಳಗೆ ಪ್ರವೇಶಿಸಿದ ತರುವಾಯ, ಯೇಹುವು ಹೊರಗೆ ಎಂಬತ್ತು ಮಂದಿಯನ್ನು ಇರಿಸಿಕೊಂಡು ಅವರಿಗೆ, “ನಾನು ನಿಮ್ಮ ಕೈಗೆ ಒಪ್ಪಿಸಿದ ಮನುಷ್ಯರಲ್ಲಿ ಯಾವನಾದರೂ ತಪ್ಪಿಸಿಕೊಂಡುಹೋದರೆ, ಅವನ ಪ್ರಾಣಕ್ಕೆ ನಿಮ್ಮ ಪ್ರಾಣ ಈಡಾಗಿರುವುದು,” ಎಂದನು.</verse>
				<verse number="25">ಅವನು ದಹನಬಲಿಯನ್ನು ಅರ್ಪಿಸಿ ತೀರಿಸಿದ ತರುವಾಯ, ಯೇಹುವು ಕಾವಲುಗಾರರಿಗೂ, ಅಧಿಪತಿಗಳಿಗೂ, “ನೀವು ಒಳಗೆ ಹೋಗಿ ಯಾವನೂ ಹೊರಗೆ ಬಾರದ ಹಾಗೆ ಅವರನ್ನು ಸಂಹರಿಸಿರಿ,” ಎಂದನು. ಹಾಗೆಯೇ ಅವರು ಒಳಗೆ ಹೋಗಿ ಅವರನ್ನು ಖಡ್ಗದಿಂದ ಸಂಹರಿಸಿ ಅವರ ಶವಗಳನ್ನು ಹೊರಗೆ ಹಾಕಿದ ತರುವಾಯ, ಬಾಳನ ಗರ್ಭಗುಡಿಯನ್ನು ಪ್ರವೇಶಿಸಿ,</verse>
				<verse number="26">ಬಾಳನ ದೇವಸ್ಥಾನದಿಂದ ವಿಗ್ರಹಗಳನ್ನು ತಂದು ಅವುಗಳನ್ನು ಸುಟ್ಟುಬಿಟ್ಟರು.</verse>
				<verse number="27">ಇದಲ್ಲದೆ ಅವರು ಬಾಳನ ವಿಗ್ರಹವನ್ನು ಒಡೆದುಹಾಕಿ, ಬಾಳನ ದೇವಸ್ಥಾನವನ್ನು ಕೆಡವಿಬಿಟ್ಟು, ಆ ಸ್ಥಳವನ್ನು ಇಂದಿನವರೆಗೂ ಶೌಚಕ್ಕಾಗಿ ಉಪಯೋಗಿಸುತ್ತಾರೆ.</verse>
				<verse number="28">ಹೀಗೆಯೇ ಯೇಹುವು ಬಾಳನ ಪೂಜೆಯನ್ನು ಇಸ್ರಾಯೇಲಿನಲ್ಲಿಂದ ನಾಶಮಾಡಿಬಿಟ್ಟನು.</verse>
				<verse number="29">ಆದರೆ ಬೇತೇಲಿನಲ್ಲಿಯೂ, ದಾನಿನಲ್ಲಿಯೂ ಇರುವ ಬಂಗಾರದ ಕರುಗಳಿಂದ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಪಾಪಗಳನ್ನು ಯೇಹುವು ತೊರೆದುಬಿಡಲಿಲ್ಲ.</verse>
				<verse number="30">ಯೆಹೋವ ದೇವರು ಯೇಹುವಿಗೆ, “ನೀನು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ನಡೆಸಿ ನನ್ನ ಮೆಚ್ಚಿಗೆಯನ್ನು ಪಡೆದೆ; ಅಹಾಬನ ಮನೆಯವರನ್ನು ಕುರಿತು ನನ್ನ ಹೃದಯದಲ್ಲಿದ್ದ ಎಲ್ಲದರ ಪ್ರಕಾರ ಮಾಡಿದ್ದರಿಂದ, ನಿನ್ನ ಸಂತತಿಯವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು,” ಎಂದರು.</verse>
				<verse number="31">ಯೇಹುವು ತನ್ನ ಪೂರ್ಣಹೃದಯದಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ನಿಯಮದಲ್ಲಿ ನಡೆಯಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.</verse>
				<verse number="32">ಆ ದಿವಸಗಳಲ್ಲಿ ಯೆಹೋವ ದೇವರು ಇಸ್ರಾಯೇಲನ್ನು ತಗ್ಗಿಸಲು ಆರಂಭಿಸಿದರು. ಹಜಾಯೇಲನು ಬಂದು ಇಸ್ರಾಯೇಲಿನ ಸಮಸ್ತ ಮೇರೆಗಳಲ್ಲಿ ಅವರನ್ನು ಸಂಹರಿಸಿದನು.</verse>
				<verse number="33">ಪೂರ್ವದಲ್ಲಿ ಯೊರ್ದನ್ ಮೊದಲುಗೊಂಡು ಗಾದ್ಯರೂ, ರೂಬೇನ್ಯರೂ ನಿವಾಸವಾಗಿದ್ದ ಗಿಲ್ಯಾದಿನ ಸಮಸ್ತ ದೇಶವನ್ನೂ, ಅರ್ನೋನ್ ನದಿಯ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಮನಸ್ಸೆಯವರು ನಿವಾಸವಾಗಿದ್ದ ಗಿಲ್ಯಾದ್ ಬಾಷಾನಿನಲ್ಲಿರುವವರನ್ನೂ ಹಜಾಯೇಲನು ಸಂಹರಿಸಿದನು.</verse>
				<verse number="34">ಯೇಹುವಿನ ಇತರ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ, ಅವನ ಪರಾಕ್ರಮವೆಲ್ಲವೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="35">ಯೇಹು ತನ್ನ ಪಿತೃಗಳ ಜೊತೆಯಲ್ಲಿ ವಿಶ್ರಾಂತಿ ಹೊಂದಿದ್ದರಿಂದ ಅವನನ್ನು ಸಮಾರ್ಯದಲ್ಲಿ ಹೂಳಿಟ್ಟರು. ಅವನ ಮಗ ಯೆಹೋವಾಹಾಜನು ಅವನಿಗೆ ಬದಲಾಗಿ ಅರಸನಾದನು.</verse>
				<verse number="36">ಯೇಹುವು ಸಮಾರ್ಯದಲ್ಲಿ ಇಸ್ರಾಯೇಲಿನ ಮೇಲೆ ಆಳಿದ ಸಮಯ ಇಪ್ಪತ್ತೆಂಟು ವರ್ಷಗಳು.</verse>
			</chapter>
			<chapter number="11">
				<verse number="1">ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ಕಂಡಾಗ, ಅವಳು ಎದ್ದು ರಾಜಸಂತಾನದವರನ್ನೆಲ್ಲಾ ನಾಶಮಾಡಲು ಆರಂಭಿಸಿದಳು.</verse>
				<verse number="2">ಆದರೆ ಅರಸನಾದ ಯೆಹೋರಾಮನ ಮಗಳೂ ಅಹಜ್ಯನ ಸಹೋದರಿಯೂ ಆದ ಯೆಹೋಷೆಬಳು ಹತರಾಗುವುದಕ್ಕಿದ್ದ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೋವಾಷನನ್ನು ಕದ್ದುಕೊಂಡು ಹೋಗಿ ಅವನು ಹತನಾಗದ ಹಾಗೆ ಅವನನ್ನೂ ಅವನ ದಾದಿಯನ್ನೂ ಅತಲ್ಯಳಿಗೆ ಕಾಣದ ಹಾಗೆ ಮಲಗುವ ಕೋಣೆಯಲ್ಲಿ ಬಚ್ಚಿಟ್ಟಳು.</verse>
				<verse number="3">ಹೀಗೆ ಅವನು ಯೆಹೋಷೆಬಳ ಸಂಗಡ ಆರು ವರ್ಷ ಯೆಹೋವ ದೇವರ ಆಲಯದಲ್ಲಿ ಗುಪ್ತವಾಗಿದ್ದನು, ಈ ಆರು ವರ್ಷ ಅತಲ್ಯಳು ದೇಶವನ್ನು ಆಳುತ್ತಾ ಇದ್ದಳು.</verse>
				<verse number="4">ಏಳನೆಯ ವರ್ಷದಲ್ಲಿ ಯೆಹೋಯಾದಾವನು ಶತಾಧಿಪತಿಯಾದವರನ್ನೂ, ಕಾರಿ ಎಂಬ ಸಿಪಾಯಿಗಳ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯಿಸಿ, ತನ್ನ ಬಳಿಗೆ ಯೆಹೋವ ದೇವರ ಆಲಯಕ್ಕೆ ಕರೆದುಕೊಂಡು ಬಂದನು. ಅವರ ಸಂಗಡ ಒಡಂಬಡಿಕೆಯನ್ನು ಮಾಡಿ, ಯೆಹೋವ ದೇವರ ಆಲಯದಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು, ಅನಂತರ ಅವನಿಗೆ ಅರಸನ ಮಗನನ್ನು ತೋರಿಸಿದನು.</verse>
				<verse number="5">ಅವರಿಗೆ, “ನೀವು ಮಾಡಬೇಕಾದದ್ದೇನೆಂದರೆ, ಸಬ್ಬತ್ ದಿನದಲ್ಲಿ ಪ್ರವೇಶಿಸುವ ನಿಮ್ಮಲ್ಲಿರುವ ಮೂರನೇ ಒಂದು ಭಾಗವು ಅರಮನೆಯ ಕಾವಲುಗಾರರಾಗಿರಬೇಕು.</verse>
				<verse number="6">ಇನ್ನೊಂದು ಭಾಗವು ಸೂರ್ ಎಂಬ ಬಾಗಿಲ ಬಳಿಯಲ್ಲಿಯೂ, ಮತ್ತೊಂದು ಭಾಗವು ಕಾವಲಿನ ಹಿಂದೆ ಇರುವ ಬಾಗಿಲ ಬಳಿಯಲ್ಲಿಯೂ ಇರಿ. ಹೀಗೆಯೇ ದೇವಾಲಯ ಕಾವಲು ಮುರಿಯದ ಹಾಗೆ ಅದನ್ನು ಕಾಯಿರಿ.</verse>
				<verse number="7">ಇದಲ್ಲದೆ ಸಬ್ಬತ್ ದಿನದಲ್ಲಿ ಹೊರಡುವ ನಿಮ್ಮೆಲ್ಲರಲ್ಲಿ ಎರಡು ಭಾಗ ಯೆಹೋವ ದೇವರ ಆಲಯದಲ್ಲಿರುವ ಅರಸನನ್ನು ಕಾಯುವವರಾಗಿರಿ.</verse>
				<verse number="8">ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ಇರಬೇಕು. ಯಾವನಾದರೂ ನಿಮ್ಮ ಸಾಲುಗಳಲ್ಲಿ ನುಗ್ಗುವಂಥವನನ್ನು ಸಂಹರಿಸಬೇಕು. ಆದರೆ ಅರಸನು ಹೊರಗೆ ಹೋಗುವಾಗಲೂ, ಒಳಗೆ ಬರುವಾಗಲೂ ನೀವು ಅವನ ಜೊತೆಯಲ್ಲಿಯೇ ಇರಬೇಕು,” ಎಂದು ಆಜ್ಞಾಪಿಸಿದನು.</verse>
				<verse number="9">ಯಾಜಕನಾದ ಯೆಹೋಯಾದಾವನು ಆಜ್ಞಾಪಿಸಿದ ಪ್ರಕಾರ ಶತಾಧಿಪತಿಗಳು ಮಾಡಿದರು. ಪ್ರತಿ ಮನುಷ್ಯನು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಬರತಕ್ಕ ಸಿಪಾಯಿಗಳನ್ನು ಯೆಹೋಯಾದಾವನ ಬಳಿಗೆ ಕರೆದುಕೊಂಡು ಬಂದರು.</verse>
				<verse number="10">ಆಗ ಯಾಜಕನು ಯೆಹೋವ ದೇವರ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ, ಗುರಾಣಿಗಳನ್ನೂ ಶತಾಧಿಪತಿಗಳಿಗೆ ಕೊಟ್ಟನು.</verse>
				<verse number="11">ಕಾವಲುಗಾರರಲ್ಲಿ ಪ್ರತಿ ಮನುಷ್ಯನು ತನ್ನ ಆಯುಧಗಳನ್ನು ಕೈಯಲ್ಲಿ ಹಿಡಿದುಕೊಂಡು ಬಲಿಪೀಠದ ಬಳಿಯಲ್ಲಿಯೂ, ಆಲಯದ ಬಳಿಯಲ್ಲಿಯೂ, ಆಲಯದ ಬಲಗಡೆಯ ಮೊದಲುಗೊಂಡು, ಆಲಯದ ಎಡಗಡೆಯವರೆಗೂ ಅರಸನ ಸುತ್ತಲೂ ನಿಂತುಕೊಂಡರು.</verse>
				<verse number="12">ಆಗ ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅರಸನನ್ನಾಗಿ ಮಾಡಿ ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು ಚಪ್ಪಾಳೆ ಹೊಡೆದು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.</verse>
				<verse number="13">ಅತಲ್ಯಳು ಕಾವಲುಗಾರರ ಮತ್ತು ಜನರ ಶಬ್ದವನ್ನೂ ಕೇಳಿದಾಗ, ಯೆಹೋವ ದೇವರ ಆಲಯದಲ್ಲಿ ಜನರ ಬಳಿಗೆ ಬಂದಳು.</verse>
				<verse number="14">ಅಲ್ಲಿ ಅರಸನು ಪದ್ಧತಿಯ ಪ್ರಕಾರ ಕಂಬದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.</verse>
				<verse number="15">ಆಗ ಯಾಜಕನಾದ ಯೆಹೋಯಾದಾವನು ಸೈನ್ಯದ ಮೇಲೆ ಇರುವ ಶತಾಧಿಪತಿಗಳಿಗೆ, “ಅವಳನ್ನು ಯೆಹೋವ ದೇವರ ಆಲಯದಲ್ಲಿ ಕೊಲ್ಲಬೇಡಿರಿ, ಎರಡು ಸಾಲು ಸಿಪಾಯಿಗಳು ಅವಳನ್ನು ನಡುವೆ ಸಾಗಿಸಿಕೊಂಡು ಹೋಗಿ ಹೊರಗೆ ತಳ್ಳಲಿ ಮತ್ತು ಅವಳನ್ನು ಹಿಂಬಾಲಿಸುವಂಥವರನ್ನು ಖಡ್ಗದಿಂದ ಕೊಂದುಹಾಕಿರಿ,” ಎಂದು ಆಜ್ಞಾಪಿಸಿದನು.</verse>
				<verse number="16">ಆಗ ಅವರು ಅವಳನ್ನು ಅಧೀನಕ್ಕೆ ತೆಗೆದುಕೊಂಡು, ಕುದುರೆಗಳು ಅರಸನ ಮನೆಯೊಳಕ್ಕೆ ಬರುವ ಮಾರ್ಗದಲ್ಲಿ ಅವಳನ್ನು ಕೊಂದುಹಾಕಿದರು.</verse>
				<verse number="17">ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ಯೆಹೋವ ದೇವರಿಗೂ, ಅರಸನಿಗೂ, ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಹಾಗೆಯೇ ಅರಸನಿಗೂ, ಜನರಿಗೂ ಮಧ್ಯದಲ್ಲಿ ಒಡಂಬಡಿಕೆ ಮಾಡಿಸಿದನು.</verse>
				<verse number="18">ದೇಶದ ಜನರೆಲ್ಲರೂ ಬಾಳನ ದೇವಸ್ಥಾನಕ್ಕೆ ಹೋಗಿ ಅದನ್ನು ಕೆಡವಿಹಾಕಿ, ಅದರ ಬಲಿಪೀಠಗಳನ್ನೂ, ವಿಗ್ರಹಗಳನ್ನೂ ಸಂಪೂರ್ಣವಾಗಿ ತುಂಡುತುಂಡಾಗಿ ಒಡೆದುಬಿಟ್ಟು, ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು. ಆಗ ಯಾಜಕನಾದ ಯೆಹೋಯಾದಾವನು ಯೆಹೋವ ದೇವರ ಆಲಯಕ್ಕೆ ಕಾವಲುಗಾರರನ್ನು ನೇಮಿಸಿದನು.</verse>
				<verse number="19">ಅವನು ಶತಾಧಿಪತಿಗಳನ್ನೂ, “ಕಾರಿ” ಎಂಬ ಸಿಪಾಯಿಗಳ ಅಧಿಕಾರಿಗಳನ್ನೂ, ಕಾವಲುಗಾರರನ್ನೂ, ದೇಶದ ಜನರೆಲ್ಲರನ್ನೂ ಕರೆದುಕೊಂಡು ಹೋಗಿ, ಅರಸನನ್ನು ಯೆಹೋವ ದೇವರ ಆಲಯದಿಂದ ಕಾವಲುಗಾರರ ಬಾಗಿಲ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಬಂದು, ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.</verse>
				<verse number="20">ಅತಲ್ಯಳನ್ನು ಅರಮನೆಯ ಬಳಿಯಲ್ಲಿ ಖಡ್ಗದಿಂದ ಕೊಂದುಹಾಕಿದ್ದರಿಂದ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.</verse>
				<verse number="21">ಯೋವಾಷ್ ಅರಸನಾದಾಗ ಏಳು ವರ್ಷದವನಾಗಿದ್ದನು.</verse>
			</chapter>
			<chapter number="12">
				<verse number="1">ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೋವಾಷನು ಅರಸನಾಗಿ, ಯೆರೂಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಚಿಬ್ಯಳು. ಅವಳು ಬೇರ್ಷೆಬ ಊರಿನವಳು.</verse>
				<verse number="2">ಯಾಜಕನಾದ ಯೆಹೋಯಾದಾವನು ಯೋವಾಷನಿಗೆ ಬೋಧಿಸಿದ ಎಲ್ಲಾ ವರ್ಷಗಳಲ್ಲಿ ಯೋವಾಷನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.</verse>
				<verse number="3">ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.</verse>
				<verse number="4">ಯೋವಾಷನು ಯಾಜಕರಿಗೆ, “ಯೆಹೋವ ದೇವರ ಆಲಯಕ್ಕೆ ಪವಿತ್ರ ಅರ್ಪಣೆಗಳಾಗಿ ತರಲಾದ ಜನಗಣತಿಯಲ್ಲಿ ಸಂಗ್ರಹಿಸಿದ ಹಣ, ವೈಯಕ್ತಿಕ ಪ್ರತಿಜ್ಞೆಗಳಿಂದ ಪಡೆದ ಹಣ ಮತ್ತು ದೇವಾಲಯಕ್ಕೆ ಸ್ವಯಂಪ್ರೇರಣೆಯಿಂದ ತಂದ ಹಣವನ್ನು ಸಂಗ್ರಹಿಸಿರಿ ಎಂದನು.</verse>
				<verse number="5">ಯಾಜಕರಲ್ಲಿ ಪ್ರತಿಯೊಬ್ಬನು ಖಜಾಂಚಿಯವರಿಂದ ಹಣವನ್ನು ತೆಗೆದುಕೊಂಡು ಆಲಯದಲ್ಲಿ ಕಂಡುಕೊಳ್ಳುವ ಒಡಕುಗಳನ್ನೆಲ್ಲಾ ದುರಸ್ತಿ ಮಾಡಿಸಲು ಉಪಯೋಗಿಸಿರಿ,” ಎಂದನು.</verse>
				<verse number="6">ಆದರೆ ಯಾಜಕರು ಅರಸನಾದ ಯೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದವರೆಗೂ ದೇವಾಲಯವನ್ನು ದುರಸ್ತಿ ಮಾಡದೆ ಇದ್ದರು.</verse>
				<verse number="7">ಆದ್ದರಿಂದ ಅರಸನಾದ ಯೋವಾಷನು ಯಾಜಕನಾದ ಯೆಹೋಯಾದಾವನನ್ನು, ಇತರ ಯಾಜಕರನ್ನು ಕರೆದು ಅವರಿಗೆ, “ನೀವು ದೇವಾಲಯದ ಒಡಕುಗಳನ್ನು ಏಕೆ ದುರಸ್ತಿ ಮಾಡಿಸುತ್ತಿಲ್ಲ? ಇನ್ನು ಮೇಲೆ ನೀವು ನಿಮಗೆ ಪರಿಚಯವಿರುವ ಖಜಾಂಚಿಯವರಿಂದ ಹಣವನ್ನು ತೆಗೆದುಕೊಳ್ಳದೆ ದೇವಾಲಯದ ಒಡಕುಗಳನ್ನು ದುರಸ್ತಿ ಮಾಡಿಸಲು ಅದನ್ನು ಒಪ್ಪಿಸಿಕೊಡಿರಿ,” ಎಂದನು.</verse>
				<verse number="8">ಆಗ ಯಾಜಕರು, “ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ, ದೇವಾಲಯದ ದುರಸ್ತಿಗಾಗಿ ಕೈ ಹಾಕುವುದಿಲ್ಲ,” ಎಂಬುದಾಗಿ ಮಾತುಕೊಟ್ಟರು.</verse>
				<verse number="9">ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಅದರ ಮುಚ್ಚಳದಲ್ಲಿ ಒಂದು ರಂಧ್ರವನ್ನು ಮಾಡಿದನು. ಅವನು ಅದನ್ನು ಬಲಿಪೀಠದ ಬಳಿಯಲ್ಲಿ ಯೆಹೋವ ದೇವರ ಆಲಯ ಪ್ರವೇಶದ ಬಲಗಡೆಯಲ್ಲಿ ಇಟ್ಟನು. ಆಗ ಬಾಗಿಲು ಕಾಯುವ ಯಾಜಕರು ಯೆಹೋವ ದೇವರ ಆಲಯಕ್ಕೆ ತರಲಾದ ಹಣವನ್ನೆಲ್ಲಾ ಅದರಲ್ಲಿ ಹಾಕಿಸುತ್ತಿದ್ದರು.</verse>
				<verse number="10">ಪೆಟ್ಟಿಗೆಯಲ್ಲಿ ಬಹಳ ಹಣ ಉಂಟೆಂದು ಅವರು ಕಂಡಾಗಲೆಲ್ಲಾ ಅರಸನ ಲೇಖಕನೂ, ಮಹಾಯಾಜಕನೂ ಬಂದು, ಯೆಹೋವ ದೇವರ ಆಲಯದಲ್ಲಿ ತಂದಿದ್ದ ಹಣವನ್ನು ಎಣಿಸಿ, ಚೀಲಗಳಲ್ಲಿ ಹಾಕಿದರು.</verse>
				<verse number="11">ಅವರು ಎಣಿಸಿದ ಹಣವನ್ನು ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಅದರೊಂದಿಗೆ, ಅವರು ಯೆಹೋವ ದೇವರ ದೇವಸ್ಥಾನದಲ್ಲಿ ಕೆಲಸ ಮಾಡುವ ಬಡಗಿ, ಶಿಲ್ಪಿ,</verse>
				<verse number="12">ಉಪ್ಪಾರ, ಕಲ್ಲುಕುಟಿಗರಿಗೆ ಕೊಟ್ಟರು. ಇದಲ್ಲದೆ ಯೆಹೋವ ದೇವರ ಆಲಯವನ್ನು ದುರಸ್ತಿ ಮಾಡುವುದಕ್ಕೆ ಮರ, ಕೆತ್ತಿದ ಕಲ್ಲುಗಳನ್ನು ತೆಗೆದುಕೊಳ್ಳುವುದಕ್ಕೂ, ಆಲಯ ದುರಸ್ತಿ ಮಾಡಲು ಬೇಕಾದ ಸಮಸ್ತ ಖರ್ಚಿಗೂ ಕೊಟ್ಟರು.</verse>
				<verse number="13">ಯೆಹೋವ ದೇವರ ಆಲಯದೊಳಗೆ ತಂದ ಹಣದಿಂದ ಬೆಳ್ಳಿ ಬಟ್ಟಲು, ಕತ್ತರಿ, ಪಾತ್ರೆ, ತುತೂರಿ, ಬೆಳ್ಳಿಬಂಗಾರದ ಸಾಮಾನುಗಳು, ಇವೆಲ್ಲವುಗಳನ್ನು ಮಾಡಿಸದೆ,</verse>
				<verse number="14">ಅವರು ಅದನ್ನು ಕೆಲಸದವರಿಗೆ ಕೊಟ್ಟು, ಯೆಹೋವ ದೇವರ ಆಲಯದ ದುರಸ್ತಿ ಮಾಡಿಸಿದರು.</verse>
				<verse number="15">ಇದಲ್ಲದೆ ಅವರು ಕೆಲಸಮಾಡುವವರಿಗೆ ಹಣ ಕೊಡುವುದಕ್ಕೆ ಯಾರ ಕೈಯಲ್ಲಿ ಒಪ್ಪಿಸಿದ್ದರೋ, ಅವರಿಂದ ಹಣದ ಲೆಕ್ಕವನ್ನು ತೆಗೆದುಕೊಳ್ಳಲಿಲ್ಲ, ಏಕೆಂದರೆ ಅವರು ನಂಬಿಗಸ್ತರಾಗಿದ್ದರು.</verse>
				<verse number="16">ಆದರೆ ಪ್ರಾಯಶ್ಚಿತ್ತ ಬಲಿಯ ಹಣವನ್ನು, ಪಾಪ ಪರಿಹಾರದ ಬಲಿಯ ಹಣವನ್ನು ಯೆಹೋವ ದೇವರ ಆಲಯಕ್ಕೆ ತೆಗೆದುಕೊಂಡು ಬರಲಿಲ್ಲ, ಅದು ಯಾಜಕರದಾಗಿತ್ತು.</verse>
				<verse number="17">ಈ ಸಮಯದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್ ಊರಿನ ಮೇಲೆ ಯುದ್ಧಮಾಡಿ, ಅದನ್ನು ವಶಪಡಿಸಿಕೊಂಡನು. ನಂತರ ಹಜಾಯೇಲನು ಯೆರೂಸಲೇಮಿನ ಮೇಲೆ ದಾಳಿಮಾಡಲು ಹೊರಟನು.</verse>
				<verse number="18">ಆಗ ಯೆಹೂದದ ಅರಸನಾದ ಯೋವಾಷನು ತನ್ನ ಪೂರ್ವಜರಾದ ಯೆಹೋಷಾಫಾಟ, ಯೆಹೋರಾಮ್, ಅಹಜ್ಯ ಎಂಬ ಯೆಹೂದದ ಅರಸರು ಅರ್ಪಿಸಿದ ಸಮಸ್ತ ಪ್ರತಿಷ್ಠಿತವಾದವುಗಳನ್ನೂ ತಾನೇ ಸ್ವತಃ ಅರ್ಪಿಸಿದ ಪ್ರತಿಷ್ಠಿತವಾದವುಗಳನ್ನೂ ಯೆಹೋವ ದೇವರ ಆಲಯದ ಬೊಕ್ಕಸದಲ್ಲಿಯೂ, ಅರಸನ ಮನೆಯಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ತೆಗೆದುಕೊಂಡು ಅರಾಮಿನ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟುಹೋದನು.</verse>
				<verse number="19">ಯೋವಾಷನ ಇತರ ಕಾರ್ಯಗಳು, ಅವನು ಮಾಡಿದ್ದೆಲ್ಲವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="20">ಯೋವಾಷನ ಸೇವಕರು ಎದ್ದು ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಸಿಲ್ಲಾ ಊರಿಗೆ ಇಳಿದು ಹೋಗುವ ಮಾರ್ಗವಾದ ಬೇತ್ ಮಿಲ್ಲೋ ಎಂಬ ಸ್ಥಳದಲ್ಲಿ ಯೋವಾಷನನ್ನು ಕೊಂದುಹಾಕಿದರು.</verse>
				<verse number="21">ಅವನ ಸೇವಕರಾದ ಶಿಮೆಯಾತನ ಮಗ ಯೋಜಾಬಾದ್ ಮತ್ತು ಶೋಮೇರನ ಮಗ ಯೆಹೋಜಾಬಾದ್ ಎಂಬವರು ಅರಸನನ್ನು ಕೊಂದರು. ಯೋವಾಷನ ಜನರು ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನ ಮಗ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.</verse>
			</chapter>
			<chapter number="13">
				<verse number="1">ಯೆಹೂದದ ಅರಸನಾದ ಅಹಜ್ಯನ ಮಗ ಯೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದಲ್ಲಿ, ಯೇಹುವಿನ ಮಗ ಯೆಹೋವಾಹಾಜನು ಸಮಾರ್ಯದಲ್ಲಿ ಇಸ್ರಾಯೇಲಿನ ಅರಸನಾದನು. ಅವನು ಹದಿನೇಳು ವರ್ಷ ಆಳಿದನು.</verse>
				<verse number="2">ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನು ಬಿಟ್ಟುಬಿಡದೆ, ಅವುಗಳನ್ನು ಹಿಂಬಾಲಿಸಿದನು.</verse>
				<verse number="3">ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಕೋಪಿಸಿಕೊಂಡು, ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಯಲ್ಲಿಯೂ, ಹಜಾಯೇಲನ ಮಗ ಬೆನ್ಹದದನ ಕೈಯಲ್ಲಿಯೂ ಬಹುಕಾಲ ಒಪ್ಪಿಸಿದರು.</verse>
				<verse number="4">ಆಗ ಯೆಹೋವಾಹಾಜನು ಯೆಹೋವ ದೇವರನ್ನು ಬೇಡಿಕೊಂಡದ್ದರಿಂದ ಯೆಹೋವ ದೇವರು ಅವನ ಮೊರೆಯನ್ನು ಕೇಳಿದರು. ಅರಾಮ್ಯರ ಅರಸನು ಇಸ್ರಾಯೇಲರನ್ನು ಬಾಧೆಪಡಿಸಿದ್ದನ್ನು ಅವರು ಕಂಡು,</verse>
				<verse number="5">ಯೆಹೋವ ದೇವರು ಇಸ್ರಾಯೇಲರಿಗೆ ಒಬ್ಬ ವಿಮೋಚಕನನ್ನು ಕೊಟ್ಟಿದ್ದರಿಂದ, ಅವರು ಅರಾಮ್ಯರ ಕೈಯಿಂದ ತಪ್ಪಿಸಿಕೊಂಡು ಹೋದರು. ಆಗ ಇಸ್ರಾಯೇಲರು ಮುಂಚಿನ ಹಾಗೆ ತಮ್ಮ ಮನೆಗಳಲ್ಲಿ ವಾಸವಾಗಿದ್ದರು.</verse>
				<verse number="6">ಆದರೆ ಅವರು ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ಯಾರೊಬ್ಬಾಮನ ಮನೆಯ ಪಾಪಗಳನ್ನು ಬಿಟ್ಟುಬಿಡದೆ ಅವುಗಳಲ್ಲಿ ಮುಂದುವರಿದರು. ಇದಲ್ಲದೆ ಸಮಾರ್ಯದಲ್ಲಿ ಅಶೇರ ಸ್ತಂಭ ಇನ್ನೂ ಉಳಿದಿತ್ತು.</verse>
				<verse number="7">ಯೆಹೋವಾಹಾಜನ ಸೈನ್ಯದಲ್ಲಿ ಐವತ್ತು ಕುದುರೆ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಜನ ಕಾಲಾಳುಗಳ ಹೊರತು ಏನೂ ಉಳಿಯಲಿಲ್ಲ. ಏಕೆಂದರೆ ಅರಾಮಿನ ಅರಸನು ಉಳಿದವರನ್ನು ಸಂಹರಿಸಿ, ತುಳಿದು, ಧೂಳಿನ ಹಾಗೆ ಮಾಡಿದನು.</verse>
				<verse number="8">ಯೆಹೋವಾಹಾಜನ ಇತರ ಕಾರ್ಯಗಳೂ ಅವನು ಮಾಡಿದ್ದೆಲ್ಲವೂ ಅವನ ಪರಾಕ್ರಮವೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="9">ಯೆಹೋವಾಹಾಜನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು. ಅವನ ಶವವನ್ನು ಸಮಾರ್ಯದಲ್ಲಿ ಹೂಳಿಟ್ಟರು. ಅವನ ಮಗ ಯೋವಾಷನು ಅವನಿಗೆ ಬದಲಾಗಿ ಅರಸನಾದನು.</verse>
				<verse number="10">ಯೆಹೂದದ ಅರಸನಾದ ಯೋವಾಷನ ಆಳ್ವಿಕೆಯ ಮೂವತ್ತೇಳನೆಯ ವರ್ಷದಲ್ಲಿ ಯೆಹೋವಾಹಾಜನ ಮಗ ಯೋವಾಷನು ಸಮಾರ್ಯದಲ್ಲಿ ಇಸ್ರಾಯೇಲಿನ ಅರಸನಾದನು. ಅವನು ಹದಿನಾರು ವರ್ಷ ಆಳಿದನು.</verse>
				<verse number="11">ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ, ಇಸ್ರಾಯೇಲರನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಸಮಸ್ತ ಪಾಪಗಳನ್ನು ತೊರೆದುಬಿಡದೆ, ಅವುಗಳಲ್ಲಿ ಮುಂದುವರೆದನು.</verse>
				<verse number="12">ಯೋವಾಷನ ಇತರ ಕ್ರಿಯೆಗಳೂ, ಅವನು ಮಾಡಿದ್ದೆಲ್ಲವೂ, ಅವನು ಯೆಹೂದದ ಅರಸನಾದ ಅಮಚ್ಯನ ವಿರುದ್ಧ ಯುದ್ಧ ಮಾಡಿದ ಅವನ ಪರಾಕ್ರಮವೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="13">ಯೋವಾಷನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು, ಇವನ ಶವವನ್ನು ಸಮಾರ್ಯದಲ್ಲಿ ಇಸ್ರಾಯೇಲಿನ ಅರಸರ ಸ್ಮಶಾನದಲ್ಲಿ ಸಮಾಧಿಮಾಡಿದರು. ಯಾರೊಬ್ಬಾಮನು ಅವನ ಸಿಂಹಾಸನ ಮೇಲೆ ಕುಳಿತುಕೊಂಡನು.</verse>
				<verse number="14">ಆಗ ಎಲೀಷನು ಮರಣಕರ ವ್ಯಾಧಿಯಿಂದ ಬಳಲುತ್ತಿದ್ದಾಗ, ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು, ಅವನ ಮೇಲೆ ಬಿದ್ದು, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥಗಳೂ ಕುದುರೆ ಸವಾರರು ಆಗಿದ್ದವನೇ!” ಎಂದು ಹೇಳುತ್ತಾ ಅತ್ತನು.</verse>
				<verse number="15">ಎಲೀಷನು ಅವನಿಗೆ, “ಒಂದು ಬಿಲ್ಲನ್ನೂ ಬಾಣಗಳನ್ನೂ ತೆಗೆದುಕೋ,” ಎಂದನು. ಅವನು ತೆಗೆದುಕೊಂಡನು.</verse>
				<verse number="16">ಅವನು ಇಸ್ರಾಯೇಲಿನ ಅರಸನಿಗೆ, “ನಿನ್ನ ಕೈಯಲ್ಲಿ ಬಿಲ್ಲನ್ನು ತೆಗೆದುಕೋ,” ಅವನು ಅದನ್ನು ತೆಗೆದುಕೊಂಡಾಗ ಎಲೀಷನು ತನ್ನ ಕೈಗಳನ್ನು ಅರಸನ ಕೈಗಳ ಮೇಲೆ ಇಟ್ಟನು.</verse>
				<verse number="17">“ಪೂರ್ವದಲ್ಲಿರುವ ಕಿಟಕಿಯನ್ನು ತೆರೆ,” ಎಂದನು. ಅವನು ತೆರೆದನು. ಎಲೀಷನು, “ಎಸೆ,” ಅನ್ನಲು, ಅವನು ಎಸೆದನು. “ಯೆಹೋವ ದೇವರ ವಿಜಯದ ಬಾಣವೇ, ಅರಾಮಿನಿಂದ ತಪ್ಪಿಸುವ ವಿಜಯದ ಬಾಣವೇ, ಅಫೇಕಿನಲ್ಲಿ ಅರಾಮ್ಯರನ್ನು ನಾಶಮಾಡುವವರೆಗೂ ನೀನು ಅವರನ್ನು ಹೊಡೆಯುವೆ,” ಎಂದು ಎಲೀಷನು ಹೇಳಿದನು.</verse>
				<verse number="18">ಅವನು, “ಬಾಣಗಳನ್ನು ತೆಗೆದುಕೋ,” ಎಂದನು. ಅರಸನು ತೆಗೆದುಕೊಂಡನು. ಎಲೀಷನು ಇಸ್ರಾಯೇಲಿನ ಅರಸನಿಗೆ, “ನೆಲದ ಮೇಲೆ ಹೊಡೆ,” ಎಂದನು. ಆಗ ಅವನು ಮೂರು ಸಾರಿ ಮಾತ್ರ ಹೊಡೆದು ನಿಂತನು.</verse>
				<verse number="19">ಆದರೆ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು, “ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಆಗ ಅರಾಮ್ಯರನ್ನು ನಾಶಮಾಡುವವರೆಗೂ ಹೊಡೆಯುತ್ತಿದ್ದೆ. ಆದರೆ ಈಗ ಅರಾಮ್ಯರನ್ನು ಮೂರು ಸಾರಿ ಮಾತ್ರ ಹೊಡೆಯುವೆ,” ಎಂದನು.</verse>
				<verse number="20">ಅನಂತರ ಎಲೀಷನು ಮೃತನಾದನು. ಅವನ ಶವವನ್ನು ಸಮಾಧಿಮಾಡಿದರು. ವರ್ಷದ ಆರಂಭದಲ್ಲಿ ಮೋವಾಬ್ಯರ ದಂಡುಗಳು ದೇಶದಲ್ಲಿ ಪ್ರವೇಶಿಸಿದವು.</verse>
				<verse number="21">ಒಂದು ದಿನ ಕೆಲವು ಇಸ್ರಾಯೇಲರು ಒಬ್ಬ ಮನುಷ್ಯನನ್ನು ಸಮಾಧಿಮಾಡಲು ಹೋಗುತ್ತಿದ್ದರು. ಆಗ, ಮೋವಾಬ್ಯರ ದಂಡು ಬರುತ್ತಿರುವುದನ್ನು ಕಂಡು, ಆ ಶವವನ್ನು ಎಲೀಷನ ಸಮಾಧಿಯಲ್ಲಿ ಬಿಸಾಡಿ ಓಡಿಹೋದರು. ಆ ಶವ ಸಮಾಧಿಯ ಮೇಲೆಬಿದ್ದಾಗ, ಅದು ಎಲೀಷನ ಎಲುಬುಗಳಿಗೆ ತಗಲಿ ಜೀವ ಬಂದು ಎದ್ದು ನಿಂತನು.</verse>
				<verse number="22">ಯೆಹೋವಾಹಾಜನ ದಿವಸಗಳೆಲ್ಲಾ ಅರಾಮಿನ ಅರಸನಾದ ಹಜಾಯೇಲನು ಇಸ್ರಾಯೇಲರನ್ನು ಬಾಧೆಪಡಿಸಿದನು.</verse>
				<verse number="23">ಆದರೆ ಯೆಹೋವ ದೇವರು ಅಬ್ರಹಾಮನ, ಇಸಾಕನ, ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಇಸ್ರಾಯೇಲರಿಗೆ ಕೃಪೆತೋರಿಸಿ ಅವರ ಮೇಲೆ ಅನುಕಂಪಗೊಂಡರು. ಅವರನ್ನು ನಾಶಮಾಡಲು, ಆತನು ಅವರನ್ನು ತನ್ನಿಂದ ತೊರೆದುಬಿಡಲು ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲು ಮನಸ್ಸು ಮಾಡಲಿಲ್ಲ.</verse>
				<verse number="24">ಅರಾಮಿನ ಅರಸನಾದ ಹಜಾಯೇಲನು ಮರಣಹೊಂದಿದನು. ಅವನ ಮಗ ಬೆನ್ಹದದನು ಅವನಿಗೆ ಬದಲಾಗಿ ಅರಸನಾದನು.</verse>
				<verse number="25">ಆಗ ಯೆಹೋವಾಹಾಜನ ಮಗ ಯೋವಾಷನು ಯುದ್ಧದಲ್ಲಿ ತನ್ನ ತಂದೆ ಯೆಹೋವಾಹಾಜನ ಕೈಯಿಂದ ಹಜಾಯೇಲನು ತೆಗೆದುಕೊಂಡಿದ್ದ ಪಟ್ಟಣಗಳನ್ನು ಅವನ ಮಗ ಬೆನ್ಹದದನ ಕೈಯಿಂದ ತಿರುಗಿ ತೆಗೆದುಕೊಂಡನು. ಯೋವಾಷನು ಅವನನ್ನು ಮೂರು ಸಾರಿ ಸೋಲಿಸಿ, ಇಸ್ರಾಯೇಲಿನ ಪಟ್ಟಣಗಳನ್ನು ತಿರುಗಿ ತೆಗೆದುಕೊಂಡನು.</verse>
			</chapter>
			<chapter number="14">
				<verse number="1">ಇಸ್ರಾಯೇಲಿನ ಅರಸನಾಗಿರುವ ಯೆಹೋವಾಹಾಜನ ಮಗನಾದ ಯೋವಾಷನ ಆಳ್ವಿಕೆಯ ಎರಡನೆಯ ವರ್ಷದಲ್ಲಿ, ಯೆಹೂದದ ಅರಸನಾದ ಯೋವಾಷನ ಮಗ ಅಮಚ್ಯನು ಅರಸನಾದನು.</verse>
				<verse number="2">ಅವನು ಆಳಲು ಆರಂಭಿಸಿದಾಗ, ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಯೆಹೋವದ್ದಾನ್, ಅವಳು ಯೆರೂಸಲೇಮಿನವಳು.</verse>
				<verse number="3">ಅವನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೇ ಮಾಡಿದನು, ಆದರೆ ತನ್ನ ಪಿತೃವಾದ ದಾವೀದನ ಹಾಗಲ್ಲ. ತನ್ನ ತಂದೆ ಯೋವಾಷನು ಮಾಡಿದ ಹಾಗೆ ಸಮಸ್ತವನ್ನು ಮಾಡಿದನು.</verse>
				<verse number="4">ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.</verse>
				<verse number="5">ಇವನು ರಾಜ್ಯವನ್ನು ಸ್ಥಿರಪಡಿಸಿಕೊಂಡ ತರುವಾಯ, ಅರಸನಾಗಿದ್ದ ತನ್ನ ತಂದೆಯನ್ನು ಕೊಂದ ಸೇವಕರಿಗೆ ಮರಣದಂಡನೆಯನ್ನು ವಿಧಿಸಿದನು.</verse>
				<verse number="6">ಆದರೆ, “ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆಯ ಪಾಪಕ್ಕಾಗಿ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪದ ನಿಮಿತ್ತವೇ ಮರಣಶಿಕ್ಷೆಯನ್ನು ಹೊಂದಬೇಕು,” ಎಂದು ಯೆಹೋವ ದೇವರು ಆಜ್ಞಾಪಿಸಿದ ಮೋಶೆಯ ನಿಯಮ ಗ್ರಂಥದಲ್ಲಿ ಬರೆದಿರುವ ಪ್ರಕಾರ, ಅವನು ಕೊಲೆಗಾರರ ಮಕ್ಕಳನ್ನು ಕೊಂದುಹಾಕಲಿಲ್ಲ.</verse>
				<verse number="7">ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಸೋಲಿಸಿ, ಯುದ್ಧದಲ್ಲಿ ಸೆಲ ದುರ್ಗವನ್ನು ವಶಪಡಿಸಿಕೊಂಡು, ಅದಕ್ಕೆ ಯೊಕ್ತೆಯೇಲ್ ಎಂದು ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.</verse>
				<verse number="8">ಆಗ ಅಮಚ್ಯನು, ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಇಸ್ರಾಯೇಲರ ಅರಸನಾದ ಯೋವಾಷನಿಗೆ, “ನಾವು ಒಬ್ಬರನ್ನೊಬ್ಬರು ಎದುರಿಸೋಣ ಬಾ,” ಎಂದು ದೂತರ ಮುಖಾಂತರ ಹೇಳಿ ಕಳುಹಿಸಿದನು.</verse>
				<verse number="9">ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ, “ಲೆಬನೋನಿನಲ್ಲಿದ್ದ ಮುಳ್ಳುಗಿಡವು ಲೆಬನೋನಿನಲ್ಲಿರುವ ದೇವದಾರು ಮರಕ್ಕೆ, ‘ನನ್ನ ಮಗನಿಗೆ ಹೆಂಡತಿಯಾಗಿರಲು ನೀನು ನಿನ್ನ ಮಗಳನ್ನು ಕೊಡು,’ ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿಯಿತು.</verse>
				<verse number="10">ನೀನು ಎದೋಮ್ಯರನ್ನು ಸೋಲಿಸಿದ್ದರಿಂದ ಗರ್ವಪಡುತ್ತಿರುವೆ, ನಿನ್ನ ಜಯದಲ್ಲಿ ಘನಪಡುತ್ತಾ, ಮನೆಯಲ್ಲಿ ಸುಮ್ಮನೆ ಕೂತಿರು. ನೀನೂ, ನಿನ್ನ ಸಂಗಡ ಯೆಹೂದವೂ ಬಿದ್ದುಹೋಗುವಂತೆ ನಿನ್ನ ಕೇಡಿಗೆ ನೀನೇ ಕೈ ಹಾಕುವುದೇಕೆ?” ಎಂದು ಹೇಳಿ ಕಳುಹಿಸಿದನು.</verse>
				<verse number="11">ಆದರೆ ಅಮಚ್ಯನು ಕೇಳದೆ ಹೋದನು. ಆದ್ದರಿಂದ ಇಸ್ರಾಯೇಲಿನ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು. ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ ಷೆಮೆಷ್ ಊರಿನ ಬಳಿಯಲ್ಲಿ ಒಬ್ಬರನ್ನೊಬ್ಬರು ಎದುರಿಸಿದರು.</verse>
				<verse number="12">ಯೆಹೂದದವರು ಇಸ್ರಾಯೇಲರ ಮುಂದೆ ಸೋತುಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಓಡಿಹೋದರು.</verse>
				<verse number="13">ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಅಹಜ್ಯನ ಮೊಮ್ಮಗನೂ ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ ಷೆಮೆಷ್ ಬಳಿಯಲ್ಲಿ ವಶಪಡಿಸಿಕೊಂಡನು. ಅನಂತರ ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು, ಎಫ್ರಾಯೀಮಿನ ಬಾಗಿಲು ಮೊದಲುಗೊಂಡು ಮೂಲೆಯ ಬಾಗಿಲವರೆಗೂ, ಆರುನೂರು ಅಡಿ ಉದ್ದದ ಯೆರೂಸಲೇಮಿನ ಗೋಡೆಯನ್ನು ಕೆಡವಿಬಿಟ್ಟನು.</verse>
				<verse number="14">ಯೆಹೋವ ದೇವರ ಆಲಯದಲ್ಲಿ, ಅರಮನೆಯ ಬೊಕ್ಕಸಗಳಲ್ಲಿ ಸಿಕ್ಕಿದ ಸಕಲ ಬೆಳ್ಳಿಬಂಗಾರವನ್ನೂ ಎಲ್ಲಾ ಸಲಕರಣೆಗಳನ್ನೂ ಯುದ್ಧದಲ್ಲಿ ಬಂಧಿತರಾದವರನ್ನೂ ತೆಗೆದುಕೊಂಡು ಸಮಾರ್ಯಕ್ಕೆ ಹಿಂದಿರುಗಿದನು.</verse>
				<verse number="15">ಯೋವಾಷನು ಮಾಡಿದ ಇತರ ಕ್ರಿಯೆಗಳೂ, ಅವನ ಪರಾಕ್ರಮವೂ, ಅವನು ಯೆಹೂದದ ಅರಸನಾದ ಅಮಚ್ಯನ ವಿರುದ್ಧ ಯುದ್ಧ ಮಾಡಿದ್ದೂ, ಇಸ್ರಾಯೇಲಿನ ಅರಸುಗಳ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="16">ಯೋವಾಷನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು. ಅವನನ್ನು ಸಮಾರ್ಯದಲ್ಲಿ ಇಸ್ರಾಯೇಲಿನ ಅರಸುಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನ ಮಗ ಯಾರೊಬ್ಬಾಮನು ಅವನ ಬದಲಿಗೆ ಅರಸನಾದನು.</verse>
				<verse number="17">ಇಸ್ರಾಯೇಲಿನ ಅರಸನಾದ ಯೆಹೋವಾಹಾಜನ ಮಗನಾದ ಯೆಹೋವಾಷನ ಮರಣದ ತರುವಾಯ, ಯೆಹೂದದ ಅರಸನಾದ ಯೋವಾಷನ ಮಗನಾಗಿರುವ ಅಮಚ್ಯನು ಹದಿನೈದು ವರ್ಷ ಬದುಕಿದನು.</verse>
				<verse number="18">ಅಮಚ್ಯನ ಆಳ್ವಿಕೆಯ ಇತರ ಕ್ರಿಯೆಗಳನ್ನು ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="19">ಯೆರೂಸಲೇಮಿನವರು ಅಮಚ್ಯನ ವಿರೋಧವಾಗಿ ಒಳಸಂಚು ಮಾಡಿದ್ದರಿಂದ, ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ, ಅಲ್ಲಿ ಅವನನ್ನು ಕೊಂದುಹಾಕಿದರು.</verse>
				<verse number="20">ಅವರು ಅವನ ಶವವನ್ನು ಕುದುರೆಗಳ ಮೇಲೆ ತೆಗೆದುಕೊಂಡು ಬಂದು, ದಾವೀದನ ಪಟ್ಟಣವಾದ ಯೆರೂಸಲೇಮಿನಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು.</verse>
				<verse number="21">ಆಗ ಯೆಹೂದದ ಎಲ್ಲಾ ಜನರು ಹದಿನಾರು ವರ್ಷದವನಾದ ಅಜರ್ಯನನ್ನು ತೆಗೆದುಕೊಂಡು, ಅವನನ್ನು ಅವನ ತಂದೆಯಾದ ಅಮಚ್ಯನಿಗೆ ಬದಲಾಗಿ ಅರಸನಾಗಿ ಮಾಡಿದರು.</verse>
				<verse number="22">ಅಮಚ್ಯನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದ ತರುವಾಯ, ಅಜರ್ಯನು ಏಲತನ್ನು ಪುನಃ ಕಟ್ಟಿಸಿ, ಅದನ್ನು ಯೆಹೂದಕ್ಕೆ ತಿರುಗಿ ಸೇರಿಸಿಕೊಂಡನು.</verse>
				<verse number="23">ಯೆಹೂದದ ಅರಸನಾದ ಯೋವಾಷನ ಮಗನಾದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ ಇಸ್ರಾಯೇಲಿನ ಅರಸನಾದ ಯೋವಾಷನ ಮಗನಾದ ಯಾರೊಬ್ಬಾಮನು ಸಮಾರ್ಯದಲ್ಲಿ ಆಳಲು ಆರಂಭಿಸಿ, ನಾಲ್ವತ್ತೊಂದು ವರ್ಷ ಆಳಿದನು.</verse>
				<verse number="24">ಆದರೆ ಅವನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನೆಲ್ಲಾ ಅವನು ತೊರೆದುಬಿಡಲಿಲ್ಲ.</verse>
				<verse number="25">ಇದಲ್ಲದೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಗತ್‌ಹೇಫೆರಿನ ಪ್ರವಾದಿಯಾದ ಅಮಿತ್ತೈಯನ ಮಗ ಯೋನನೆಂಬ ತನ್ನ ಸೇವಕನ ಮುಖಾಂತರ ಹೇಳಿದ ವಾಕ್ಯದಂತೆ ಅವನು ಹಮಾತಿನ ಪ್ರವೇಶ ಮೊದಲುಗೊಂಡು ಅರಾಬಾ ತಗ್ಗಿನ ಸಮುದ್ರದವರೆಗೂ ಇರುವ ಇಸ್ರಾಯೇಲಿನ ಮೇರೆಯನ್ನು ತಿರುಗಿ ತೆಗೆದುಕೊಂಡನು.</verse>
				<verse number="26">ಇಸ್ರಾಯೇಲಿನಲ್ಲಿ ಪ್ರತಿಯೊಬ್ಬರೂ ಸ್ವತಂತ್ರನಾಗಿರಲಿ, ಗುಲಾಮನಾಗಿರಲಿ, ಎಲ್ಲರು ಎಷ್ಟು ಕಷ್ಟದಲ್ಲಿದ್ದಾರೆಂಬುದನ್ನು ಯೆಹೋವ ದೇವರು ನೋಡಿದರು. ಅವರಿಗೆ ಸಹಾಯ ಮಾಡುವವರು ಯಾರೂ ಇರಲಿಲ್ಲ.</verse>
				<verse number="27">ಇಸ್ರಾಯೇಲಿನ ನಾಮವನ್ನು ಆಕಾಶದ ಕೆಳಗಿನಿಂದ ಅಳಿಸಿಬಿಡುವನೆಂದು ಯೆಹೋವ ದೇವರು ಹೇಳದೇ ಇದ್ದುದರಿಂದ, ಯೋವಾಷನ ಮಗ ಯಾರೊಬ್ಬಾಮನ ಕೈಯಿಂದ ಅವರನ್ನು ರಕ್ಷಿಸಿದರು.</verse>
				<verse number="28">ಯಾರೊಬ್ಬಾಮನ ಇತರ ಕ್ರಿಯೆಗಳೂ, ಅವನು ಮಾಡಿದ ಸಮಸ್ತವೂ, ಅವನ ಪರಾಕ್ರಮವೂ, ಅವನ ಯುದ್ಧಗಳೂ, ಯೆಹೂದಕ್ಕೆ ಸೇರಿದ ದಮಸ್ಕವನ್ನೂ, ಹಮಾತನ್ನೂ ಇಸ್ರಾಯೇಲಿಗೋಸ್ಕರ ಹಿಂದಿರುಗಿ ತೆಗೆದುಕೊಂಡದ್ದೂ, ಇಸ್ರಾಯೇಲಿನ ಅರಸುಗಳ ದಿನಚರ್ಯೆಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="29">ಯಾರೊಬ್ಬಾಮನು ಮೃತನಾಗಿ ಇಸ್ರಾಯೇಲಿನ ಅರಸುಗಳಾದ ತನ್ನ ಪಿತೃಗಳ ಜೊತೆ ಸೇರಿದನು. ಅವನ ಮಗ ಜೆಕರ್ಯನು ಅವನಿಗೆ ಬದಲಾಗಿ ಅರಸನಾದನು.</verse>
			</chapter>
			<chapter number="15">
				<verse number="1">ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ, ಯೆಹೂದದ ಅರಸನಾಗಿರುವ ಅಮಚ್ಯನ ಮಗ ಅಜರ್ಯನು ಆಳಲು ಆರಂಭಿಸಿದನು.</verse>
				<verse number="2">ಅವನು ಅರಸನಾದಾಗ, ಹದಿನಾರು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು, ಅವಳು ಯೆರೂಸಲೇಮಿನವಳು.</verse>
				<verse number="3">ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.</verse>
				<verse number="4">ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.</verse>
				<verse number="5">ಯೆಹೋವ ದೇವರು ಅರಸನನ್ನು ಮರಣದ ದಿವಸದವರೆಗೂ ಕುಷ್ಠರೋಗದಿಂದ ಬಾಧಿಸಿದ್ದರಿಂದ, ಅವನು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗ ಯೋತಾಮನು ರಾಜಗೃಹಾಧಿಪತ್ಯವನ್ನು ಮತ್ತು ಪ್ರಜಾಪಾಲನೆಯನ್ನೂ ನೋಡಿಕೊಳ್ಳುತ್ತಿದ್ದನು.</verse>
				<verse number="6">ಅಜರ್ಯನ ಇತರ ಕ್ರಿಯೆಗಳನ್ನು ಅವನು ಮಾಡಿದ ಸಮಸ್ತವನ್ನು ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="7">ಅಜರ್ಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.</verse>
				<verse number="8">ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ಜೆಕರ್ಯನು ಸಮಾರ್ಯದಲ್ಲಿ ಇಸ್ರಾಯೇಲರ ಅರಸನಾದನು. ಅವನು ಆರು ತಿಂಗಳು ಆಳಿದನು.</verse>
				<verse number="9">ಅವನು ತನ್ನ ಪಿತೃಗಳು ಮಾಡಿದ ಪ್ರಕಾರ, ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.</verse>
				<verse number="10">ಯಾಬೇಷನ ಮಗ ಶಲ್ಲೂಮನು ಜೆಕರ್ಯನ ಮೇಲೆ ಒಳಸಂಚುಮಾಡಿ, ಜನರ ಮುಂದೆ ಅವನನ್ನು ಹೊಡೆದು, ಕೊಂದುಹಾಕಿ, ಅವನಿಗೆ ಬದಲಾಗಿ ಅರಸನಾದನು.</verse>
				<verse number="11">ಜೆಕರ್ಯನ ಇತರ ಕ್ರಿಯೆಗಳು ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="12">“ನಿನ್ನ ಸಂತತಿಯವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು,” ಎಂದು ಯೆಹೋವ ದೇವರು ಯೇಹುವಿಗೆ ಹೇಳಿದ ವಾಕ್ಯದಂತೆ ಇವೆಲ್ಲವೂ ನೆರವೇರಿತು.</verse>
				<verse number="13">ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗ ಶಲ್ಲೂಮನು ಅರಸನಾಗಿ, ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.</verse>
				<verse number="14">ಗಾದಿಯ ಮಗ ಮೆನಹೇಮನು ತಿರ್ಚದಿಂದ ಸಮಾರ್ಯಕ್ಕೆ ಬಂದು, ಸಮಾರ್ಯದಲ್ಲಿ ಯಾಬೇಷನ ಮಗ ಶಲ್ಲೂಮನನ್ನು ಹೊಡೆದು, ಕೊಂದುಹಾಕಿ ಅವನಿಗೆ ಬದಲಾಗಿ ಅರಸನಾದನು.</verse>
				<verse number="15">ಶಲ್ಲೂಮನ ಇತರ ಕ್ರಿಯೆಗಳೂ ಅವನು ಮಾಡಿದ ಒಳಸಂಚೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="16">ಆ ಸಮಯದಲ್ಲಿ ಮೆನಹೇಮನು ತಿರ್ಚದಿಂದ ತಿಪ್ಸಹು ಪಟ್ಟಣಕ್ಕೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲುಗಳನ್ನು ತನಗೆ ತೆರೆಯದೆ ಇದ್ದುದರಿಂದ ಎಲ್ಲರನ್ನೂ, ಅದರ ಮೇರೆಗಳಲ್ಲಿದ್ದವರೆಲ್ಲರನ್ನೂ ಸಂಹರಿಸಿದನು. ತಿಪ್ಸಹವನ್ನು ಹಾಳು ಮಾಡಿ, ಎಲ್ಲಾ ಗರ್ಭಿಣಿಯರ ಹೊಟ್ಟೆಗಳನ್ನು ಸೀಳಿಸಿದನು.</verse>
				<verse number="17">ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಗಾದಿಯ ಮಗ ಮೆನಹೇಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹತ್ತು ವರ್ಷ ಆಳಿದನು.</verse>
				<verse number="18">ಅವನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ತನ್ನ ದಿವಸಗಳಲ್ಲೆಲ್ಲಾ ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.</verse>
				<verse number="19">ಅಸ್ಸೀರಿಯಾ ದೇಶದ ಅರಸನಾದ ಪೂಲನು ಇಸ್ರಾಯೇಲ್ ದೇಶದ ಮೇಲೆ ಯುದ್ಧಕ್ಕೆ ಬಂದನು. ಆಗ ಮೆನಹೇಮನು ಅವನ ಬೆಂಬಲವನ್ನು ಪಡೆಯಲು ಮತ್ತು ರಾಜ್ಯವನ್ನು ದೃಢಪಡಿಸಲು ಪೂಲನಿಗೆ ಮೂವತ್ತು ನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು.</verse>
				<verse number="20">ಮೆನಹೇಮನು ಈ ಹಣವನ್ನು ಇಸ್ರಾಯೇಲಿನಿಂದ ವಸೂಲಿ ಮಾಡಿದನು. ಪ್ರತಿಯೊಬ್ಬ ಶ್ರೀಮಂತನು ಅಸ್ಸೀರಿಯದ ಅರಸನಿಗೆ ಕೊಡಬೇಕಾದ ಅರ್ಧ ಕಿಲೋಗ್ರಾಂ ಬೆಳ್ಳಿಯನ್ನು ನೀಡಬೇಕಾಗಿತ್ತು. ಆದ್ದರಿಂದ ಅಸ್ಸೀರಿಯದ ಅರಸನು ದೇಶದಲ್ಲಿ ನಿಲ್ಲದೆ ತನ್ನ ಸೈನ್ಯದೊಂದಿಗೆ ಹಿಂದಿರುಗಿ ಹೋದನು.</verse>
				<verse number="21">ಮೆನಹೇಮನ ಇತರ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="22">ಮೆನಹೇಮನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಮಗ ಪೆಕಹ್ಯನು ಅವನಿಗೆ ಬದಲಾಗಿ ಅರಸನಾದನು.</verse>
				<verse number="23">ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೆಯ ವರ್ಷದಲ್ಲಿ ಮೆನಹೇಮನ ಮಗ ಪೆಕಹ್ಯನು ಸಮಾರ್ಯದಲ್ಲಿ ಇಸ್ರಾಯೇಲಿನ ಅರಸನಾಗಿ, ಎರಡು ವರ್ಷ ಆಳಿದನು.</verse>
				<verse number="24">ಪೆಕಹ್ಯನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನು ತೊರೆಯಲಿಲ್ಲ.</verse>
				<verse number="25">ಆದರೆ ಅವನ ಅಧಿಪತಿಯಾದಂಥ ರೆಮಲ್ಯನ ಮಗ ಪೆಕಹನು ಗಿಲ್ಯಾದಿನ ಐವತ್ತು ಮಂದಿಯನ್ನು ತನ್ನ ಸಂಗಡ ಕೂಡಿಸಿಕೊಂಡು ಪೆಕಹ್ಯನ ವಿರುದ್ಧ ಒಳಸಂಚುಮಾಡಿ, ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಪೆಕಹ್ಯನನ್ನು ಮತ್ತು ಅರ್ಗೋಬ್, ಅರ್ಯೇ ಎಂಬವರನ್ನು ಕೊಂದುಹಾಕಿದನು. ಅನಂತರ, ಪೆಕಹ್ಯನಿಗೆ ಬದಲಾಗಿ ಪೆಕಹನು ಅರಸನಾದನು.</verse>
				<verse number="26">ಪೆಕಹ್ಯನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="27">ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೆಯ ವರುಷದಲ್ಲಿ ರೆಮಲ್ಯನ ಮಗ ಪೆಕಹನು ಸಮಾರ್ಯದಲ್ಲಿ ಇಸ್ರಾಯೇಲರ ಅರಸನಾಗಿ, ಇಪ್ಪತ್ತು ವರ್ಷ ಆಳಿದನು.</verse>
				<verse number="28">ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಅವನು ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನ ಪಾಪಗಳನ್ನು ತೊರೆದುಬಿಡಲಿಲ್ಲ.</verse>
				<verse number="29">ಇಸ್ರಾಯೇಲಿನ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನು ಬಂದು, ಇಯ್ಯೋನ್, ಆಬೇಲ್ ಬೇತ್ ಮಾಕಾ, ಯಾನೋಹ, ಕೆದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಎಲ್ಲಾ ಭೂಮಿಯನ್ನು ವಶಮಾಡಿಕೊಂಡು, ಜನರನ್ನು ಸೆರೆಯಾಗಿ ಅಸ್ಸೀರಿಯಾ ದೇಶಕ್ಕೆ ಒಯ್ದನು.</verse>
				<verse number="30">ಇದಲ್ಲದೆ ಏಲನ ಮಗ ಹೋಶೇಯನು ರೆಮಲ್ಯನ ಮಗ ಪೆಕಹನ ವಿರುದ್ಧ ಒಳಸಂಚುಮಾಡಿ, ಇವನನ್ನು ಉಜ್ಜೀಯನ ಮಗ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಸಂಹರಿಸಿ, ಅವನಿಗೆ ಬದಲಾಗಿ ಅರಸನಾದನು.</verse>
				<verse number="31">ಪೆಕಹನ ಇತರ ಕ್ರಿಯೆಗಳೂ ಅವನು ಮಾಡಿದ್ದೆಲ್ಲವೂ ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="32">ಇಸ್ರಾಯೇಲಿನ ಅರಸನೂ, ರೆಮಲ್ಯನ ಮಗನೂ ಆದ ಪೆಕಹನ ಆಳಿಕೆಯ ಎರಡನೆಯ ವರ್ಷದಲ್ಲಿ ಯೆಹೂದದ ಅರಸನಾದ ಉಜ್ಜೀಯನ ಮಗ ಯೋತಾಮನು ಆಳಲು ಆರಂಭಿಸಿದನು.</verse>
				<verse number="33">ಯೋತಾಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷ ಅವನ ತಾಯಿ.</verse>
				<verse number="34">ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.</verse>
				<verse number="35">ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು. ಯೋತಾಮನು ಯೆಹೋವ ದೇವರ ಆಲಯದ ಮೇಲಿನ ಬಾಗಿಲನ್ನು ಕಟ್ಟಿಸಿದನು.</verse>
				<verse number="36">ಯೋತಾಮನ ಇತರ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="37">ಆ ದಿವಸಗಳಲ್ಲಿ ಯೆಹೋವ ದೇವರು ಅರಾಮಿನ ಅರಸನಾದ ರೆಚೀನನನ್ನೂ ರೆಮಲ್ಯನ ಮಗ ಪೆಕಹನನ್ನೂ ಯೆಹೂದದ ವಿರೋಧವಾಗಿ ಕಳುಹಿಸಲು ಆರಂಭಿಸಿದರು.</verse>
				<verse number="38">ಯೋತಾಮನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ಮಗ ಆಹಾಜನು ಅವನಿಗೆ ಬದಲಾಗಿ ಅರಸನಾದನು.</verse>
			</chapter>
			<chapter number="16">
				<verse number="1">ರೆಮಲ್ಯನ ಮಗ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಯೆಹೂದದ ಅರಸನಾಗಿರುವ ಯೋತಾಮನ ಮಗ ಆಹಾಜನು ಆಳಲು ಆರಂಭಿಸಿದನು.</verse>
				<verse number="2">ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಆದರೆ ಅವನು ತನ್ನ ತಂದೆಯಾದ ದಾವೀದನ ಹಾಗೆ ನಡೆಯದೆ, ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಲಿಲ್ಲ,</verse>
				<verse number="3">ಆಹಾಜನು ಇಸ್ರಾಯೇಲಿನ ಅರಸರ ಮಾರ್ಗದಲ್ಲಿ ನಡೆದನು. ಇದಲ್ಲದೆ ಯೆಹೋವ ದೇವರು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಇತರ ಜನಾಂಗಗಳ ಅಸಹ್ಯಕರವಾದ ಆಚಾರಗಳನ್ನು ಅನುಸರಿಸಿ ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಯಜ್ಞವಾಗಿ ಅರ್ಪಿಸಿದನು.</verse>
				<verse number="4">ಇದಲ್ಲದೆ ಅವನು ಪೂಜಾಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಎಲ್ಲಾ ಹಸಿರಾದ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.</verse>
				<verse number="5">ಆಗ ಅರಾಮಿನ ಅರಸನಾದ ರೆಚೀನ್, ಮತ್ತು ಇಸ್ರಾಯೇಲರ ಅರಸನೂ ರೆಮಲ್ಯನ ಮಗನೂ ಆದ ಪೆಕಹನು ಯುದ್ಧಮಾಡಲು ಯೆರೂಸಲೇಮಿಗೆ ಬಂದು ಆಹಾಜನನ್ನು ಮುತ್ತಿಗೆ ಹಾಕಿದರು. ಆದರೆ ಅವನನ್ನು ಜಯಿಸುವುದು ಅವರಿಂದ ಆಗಲಿಲ್ಲ.</verse>
				<verse number="6">ಅದೇ ವೇಳೆಯಲ್ಲಿ ಅರಾಮಿನ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ ರಾಜ್ಯಕ್ಕೆ ತಿರುಗಿ ಸೇರಿಸಿಕೊಂಡು ಏಲತ್ ಪಟ್ಟಣದಿಂದ ಯೆಹೂದ್ಯರನ್ನು ಓಡಿಸಿಬಿಟ್ಟನು. ಎದೋಮ್ಯರು ಏಲತ್ ಪಟ್ಟಣದಲ್ಲಿ ಬಂದು ಇಂದಿನವರೆಗೂ ಅಲ್ಲಿ ವಾಸವಾಗಿದ್ದಾರೆ.</verse>
				<verse number="7">ಆಹಾಜನು ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನಿಗೆ, “ನಾನು ನಿನ್ನ ಸೇವಕನೂ, ನಿನ್ನ ಮಗನೂ ಆಗಿದ್ದೇನೆ. ನನಗೆ ವಿರೋಧವಾಗಿ ಎದ್ದ ಅರಾಮಿನ ಅರಸನ ಕೈಗೂ, ಇಸ್ರಾಯೇಲಿನ ಅರಸನ ಕೈಗೂ ನನ್ನನ್ನು ತಪ್ಪಿಸಿ, ರಕ್ಷಿಸುವುದಕ್ಕೆ ಬರಬೇಕು,” ಎಂದು ಹೇಳಿ ಸೇವಕರನ್ನು ಕಳುಹಿಸಿದನು.</verse>
				<verse number="8">ಆಹಾಜನು ಯೆಹೋವ ದೇವರ ಆಲಯದಲ್ಲಿಯೂ, ಅರಮನೆಯ ಖಜಾನೆಯಲ್ಲಿಯೂ ಇದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಸ್ಸೀರಿಯದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.</verse>
				<verse number="9">ಆಗ ಅಸ್ಸೀರಿಯದ ಅರಸನು ಅವನ ಮಾತು ಕೇಳಿ, ದಮಸ್ಕಕ್ಕೆ ಹೋಗಿ, ಅದನ್ನು ಮುತ್ತಿಗೆ ಹಾಕಿ, ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು, ರೆಚೀನನನ್ನು ಕೊಂದುಹಾಕಿದನು.</verse>
				<verse number="10">ಅರಸನಾದ ಆಹಾಜನು ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನನ್ನು ಎದುರುಗೊಳ್ಳಲು ದಮಸ್ಕಕ್ಕೆ ಹೋಗಿ, ದಮಸ್ಕದಲ್ಲಿ ಒಂದು ಬಲಿಪೀಠವನ್ನು ಕಂಡನು. ಅರಸನಾದ ಆಹಾಜನು ಆ ಬಲಿಪೀಠದ ರೂಪವನ್ನೂ, ಅದರ ಎಲ್ಲಾ ಕೈಕೆಲಸದ ಪ್ರಕಾರ ಮಾದರಿಯನ್ನೂ ಯಾಜಕನಾದ ಊರೀಯನಿಗೆ ಕಳುಹಿಸಿದನು.</verse>
				<verse number="11">ಯಾಜಕನಾದ ಊರೀಯನು ಅದರ ಪ್ರಕಾರ ಒಂದು ಬಲಿಪೀಠವನ್ನು ಹಾಗೆಯೇ ಅರಸನಾದ ಆಹಾಜನು ದಮಸ್ಕದಿಂದ ಬರುವ ಮೊದಲೇ ಕಟ್ಟಿ ಮುಗಿಸಿದನು.</verse>
				<verse number="12">ಅರಸನು ದಮಸ್ಕದಿಂದ ಬಂದ ಮೇಲೆ ಬಲಿಪೀಠವನ್ನು ಕಂಡನು. ಅರಸನು ಬಲಿಪೀಠದ ಬಳಿಗೆ ಹೋಗಿ,</verse>
				<verse number="13">ಬಲಿಪೀಠದ ಮೇಲೆ ದಹನಬಲಿಯನ್ನೂ ತನ್ನ ಧಾನ್ಯ ಸಮರ್ಪಣೆಯನ್ನೂ ಅರ್ಪಿಸಿದನು, ಪಾನಗಳನ್ನು ಹೊಯ್ದನು, ಸಮಾಧಾನದ ಬಲಿಗಳ ರಕ್ತವನ್ನು ಚಿಮುಕಿಸಿದನು.</verse>
				<verse number="14">ಯೆಹೋವ ದೇವರ ಸಮ್ಮುಖದಲ್ಲಿ ಕಂಚಿನ ಬಲಿಪೀಠವನ್ನು ದೇವಾಲಯದ ಮುಂಭಾಗದಿಂದ ಅಂದರೆ ಯೆಹೋವ ದೇವರ ಆಲಯಕ್ಕೂ, ಬಲಿಪೀಠಕ್ಕೂ ಮಧ್ಯದಿಂದಲೂ ತಂದು, ಅದನ್ನು ಹೊಸ ಬಲಿಪೀಠಕ್ಕೆ ಉತ್ತರ ಕಡೆಯಲ್ಲಿ ಇಟ್ಟನು.</verse>
				<verse number="15">ಆಗ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯದಲ್ಲಿ ದಹನಬಲಿಯನ್ನೂ, ಸಾಯಂಕಾಲದ ಧಾನ್ಯ ಸಮರ್ಪಣೆಯನ್ನೂ, ಪಾನದ್ರವ್ಯವನ್ನೂ ದೊಡ್ಡ ಹೊಸ ಬಲಿಪೀಠದ ಮೇಲೆ ಅರ್ಪಿಸಿ, ದಹನಬಲಿಯ ರಕ್ತವೆಲ್ಲವನ್ನೂ ಚಿಮುಕಿಸಿದನು. ಆದರೆ ಕಂಚಿನ ಬಲಿಪೀಠವನ್ನು ನಾನು ಮಾರ್ಗದರ್ಶನಕ್ಕಾಗಿ ಉಪಯೋಗಿಸುವೆನು,” ಎಂದು ಆಜ್ಞಾಪಿಸಿದನು.</verse>
				<verse number="16">ಅರಸನಾದ ಆಹಾಜನು ಆಜ್ಞಾಪಿಸಿದ ಪ್ರಕಾರವೇ ಯಾಜಕನಾದ ಊರೀಯನು ಮಾಡಿದನು.</verse>
				<verse number="17">ಅರಸನಾದ ಆಹಾಜನು ಪೀಠದ ಅಂಚುಗಳನ್ನು ಕೊಯ್ದು, ಕಂಚಿನ ಕಡಲೆಂಬ ದೊಡ್ಡ ಪಾತ್ರೆಯನ್ನು ಅದರ ಮೇಲಿನಿಂದ ಇಳಿಸಿ, ಅದನ್ನು ಕಲ್ಲುಗಳ ಕಟ್ಟೆಯ ಮೇಲೆ ಇಟ್ಟನು.</verse>
				<verse number="18">ಯೆಹೋವ ದೇವರ ಆಲಯದ ಪ್ರಾಕಾರದ ಒಳಗೆ ಸಬ್ಬತ್ ದಿನದ ಆರಾಧನೆಗಾಗಿ, ರಾಜರಿಗಾಗಿ ಕಟ್ಟಲಾಗಿದ್ದ ಮಂಟಪವನ್ನು ಹಾಗು ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದನು, ಇವುಗಳನ್ನೆಲ್ಲ ಅಸ್ಸೀರಿಯದ ಅರಸನ ನಿಮಿತ್ತವಾಗಿ ಆಹಾಜನೇ ಬದಲಾಯಿಸಿದನು.</verse>
				<verse number="19">ಆಹಾಜನ ಆಳ್ವಿಕೆಯಲ್ಲಿಯ ಇತರ ಕ್ರಿಯೆಗಳು ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="20">ಆಹಾಜನು ಮೃತನಾಗಿ ತನ್ನ ಪಿತೃಗಳ ಬಳಿಯಲ್ಲಿ ಸೇರಿದನು. ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು.</verse>
			</chapter>
			<chapter number="17">
				<verse number="1">ಯೆಹೂದದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಏಲನ ಮಗ ಹೋಶೇಯನು ಇಸ್ರಾಯೇಲಿನ ಮೇಲೆ ಸಮಾರ್ಯದಲ್ಲಿ ಅರಸನಾಗಿ, ಒಂಬತ್ತು ವರ್ಷ ಆಳಿದನು.</verse>
				<verse number="2">ಅವನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ತನಗೆ ಮುಂಚೆ ಇದ್ದ ಇಸ್ರಾಯೇಲಿನ ಅರಸರ ಹಾಗಿರಲಿಲ್ಲ.</verse>
				<verse number="3">ಅಸ್ಸೀರಿಯದ ಅರಸನಾದ ಶಲ್ಮನೆಸೆರನು ಅವನ ವಿರುದ್ಧ ಬಂದದ್ದರಿಂದ, ಹೋಶೇಯನು ಅವನಿಗೆ ಸೇವಕನಾಗಿ ಅವನಿಗೆ ಕಪ್ಪವನ್ನು ಕೊಟ್ಟನು.</verse>
				<verse number="4">ಆದರೆ ಅಸ್ಸೀರಿಯದ ಅರಸನು ಹೋಶೇಯನಲ್ಲಿ ಒಳಸಂಚನ್ನು ಕಂಡುಹಿಡಿದನು. ಏನೆಂದರೆ, ಹೋಶೇಯನು ಅಸ್ಸೀರಿಯದ ಅರಸನಿಗೆ ವರ್ಷ ವರ್ಷಕ್ಕೂ ಕೊಡುವ ಕಪ್ಪವನ್ನು ಕೊಡದೆ, ಈಜಿಪ್ಟಿನ ಅರಸನಾದ ಸೋ ಎಂಬವನ ಬಳಿಗೆ ದೂತರನ್ನು ಕಳುಹಿಸಿದನು. ಆದ್ದರಿಂದ ಅಸ್ಸೀರಿಯದ ಅರಸನು ಅವನನ್ನು ಕಟ್ಟಿ, ಸೆರೆಮನೆಯಲ್ಲಿ ಬಂಧಿಸಿದನು.</verse>
				<verse number="5">ಆಗ ಅಸ್ಸೀರಿಯದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು, ಸಮಾರ್ಯಕ್ಕೆ ವಿರೋಧವಾಗಿ ಬಂದು ಅದನ್ನು ಮೂರು ವರ್ಷಗಳವರೆಗೂ ಮುತ್ತಿಗೆಹಾಕಿದನು.</verse>
				<verse number="6">ಹೋಶೇಯನ ಒಂಬತ್ತನೆಯ ವರ್ಷದಲ್ಲಿ ಅಸ್ಸೀರಿಯದ ಅರಸನು ಸಮಾರ್ಯವನ್ನು ವಶಪಡಿಸಿಕೊಂಡನು. ಅವನು ಇಸ್ರಾಯೇಲನ್ನು ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಒಯ್ದು ಹಲಹ ಪ್ರಾಂತದಲ್ಲಿಯೂ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತದಲ್ಲಿಯೂ ಮತ್ತು ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.</verse>
				<verse number="7">ಇಸ್ರಾಯೇಲರನ್ನು ಈಜಿಪ್ಟಿನ ಅರಸನಾದ ಫರೋಹನ ಕೈಯಿಂದ ಬಿಡಿಸಿ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ತಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದರಿಂದ ಇದೆಲ್ಲವೂ ಆಯಿತು. ಅವರು ಬೇರೆ ದೇವರುಗಳನ್ನು ಆರಾಧಿಸಿದರು.</verse>
				<verse number="8">ಅವರ ಮುಂದೆ ಯೆಹೋವ ದೇವರು ಓಡಿಸಿಬಿಟ್ಟಿದ್ದ ಜನರ ಮತ್ತು ಇಸ್ರಾಯೇಲ್ ರಾಜರ ದುರಾಚಾರಗಳನ್ನು ಅವರು ಅನುಸರಿಸಿದರು.</verse>
				<verse number="9">ಇಸ್ರಾಯೇಲರು ರಹಸ್ಯವಾಗಿ ತಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಯುಕ್ತವಾದವುಗಳನ್ನು ಮಾಡಿ ಬರುವ ಸ್ಥಳಗಳು ಮೊದಲುಗೊಂಡು ಕೋಟೆಯುಳ್ಳ ಪಟ್ಟಣಗಳವರೆಗೂ, ತಮ್ಮ ಸಮಸ್ತ ಪಟ್ಟಣಗಳಲ್ಲಿ ತಮಗೆ ಪೂಜಾಸ್ಥಳಗಳನ್ನು ಕಟ್ಟಿಸಿಕೊಂಡಿದ್ದರು.</verse>
				<verse number="10">ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ, ಹಸಿರಾದ ಎಲ್ಲಾ ಮರಗಳ ಕೆಳಗೂ ತಮಗೆ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದ್ದರು.</verse>
				<verse number="11">ಯೆಹೋವ ದೇವರು ತಮ್ಮ ಮುಂದೆ ಓಡಿಸಿಬಿಟ್ಟ ಇತರ ಜನರಂತೆ ಅವರು ಎಲ್ಲಾ ಪೂಜಾಸ್ಥಳಗಳಲ್ಲಿ ಧೂಪವನ್ನು ಸುಟ್ಟು ಯೆಹೋವ ದೇವರನ್ನು ಸಿಟ್ಟುಗೊಳಿಸುವ ಹಾಗೆ ಕೆಟ್ಟ ಕಾರ್ಯಗಳನ್ನು ಮಾಡಿದರು.</verse>
				<verse number="12">“ನೀವು ಈ ಕಾರ್ಯವನ್ನು ಮಾಡಬೇಡಿರಿ,” ಎಂದು ಯೆಹೋವ ದೇವರು ಅವರಿಗೆ ಹೇಳಿದ್ದರೂ, ಅವರು ಮೂರ್ತಿಗಳಿಗೆ ಪೂಜೆ ಮಾಡಿದರು.</verse>
				<verse number="13">“ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ, ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ಮೋಶೆಯ ಎಲ್ಲಾ ನಿಯಮದ ಪ್ರಕಾರ ನನ್ನ ಆಜ್ಞೆಗಳನ್ನೂ, ನನ್ನ ಕಟ್ಟಳೆಗಳನ್ನೂ ಕೈಗೊಳ್ಳಿರಿ,” ಎಂದು ಯೆಹೋವ ದೇವರು ಸಮಸ್ತ ಪ್ರವಾದಿಗಳ ಮುಖಾಂತರವಾಗಿಯೂ, ಸಮಸ್ತ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ, ಯೆಹೂದಕ್ಕೂ ಎಚ್ಚರಿಕೆ ಕೊಟ್ಟಿದ್ದರು.</verse>
				<verse number="14">ಆದರೆ ಅವರು ಕೇಳದೆ ತಮ್ಮ ದೇವರಾದ ಯೆಹೋವ ದೇವರಲ್ಲಿ ನಂಬಿಕೆ ಇಡದೆ ತಮ್ಮ ಪಿತೃಗಳಂತೆ ದೇವರ ಆಜ್ಞೆಗಳಿಗೆ ಮಣಿಯದೆ,</verse>
				<verse number="15">ದೇವರ ಕಟ್ಟಳೆಗಳನ್ನೂ, ದೇವರು ತಮ್ಮ ಪಿತೃಗಳ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಅವರಿಗೆ ಹೇಳಿದ ಎಚ್ಚರಿಕೆಯನ್ನೂ ತಿರಸ್ಕರಿಸಿದರು. ಅವರು ವ್ಯರ್ಥವಾದ ವಿಗ್ರಹಗಳನ್ನು ಹಿಂಬಾಲಿಸಿ, ನಿಷ್ಪ್ರಯೋಜಕರಾದರು. “ನೀವು ಅವರ ಹಾಗೆ ಮಾಡಬೇಡಿರಿ,” ಎಂದು ಯೆಹೋವ ದೇವರು ಅವರಿಗೆ ಆಜ್ಞಾಪಿಸಿದ್ದರೂ, ಅವರು ತಮ್ಮ ಸುತ್ತಲಿನ ಜನರನ್ನೇ ಅನುಸರಿಸಿದರು.</verse>
				<verse number="16">ಇದಲ್ಲದೆ ಅವರು ತಮ್ಮ ದೇವರಾದ ಯೆಹೋವ ದೇವರ ಸಮಸ್ತ ಆಜ್ಞೆಗಳನ್ನು ಬಿಟ್ಟುಬಿಟ್ಟು, ತಮಗೆ ತಾವೇ ಎರಡು ಎರಕದ ಕರುಗಳ ಮೂರ್ತಿಗಳನ್ನು ಮಾಡಿಕೊಂಡರು. ಅವರು ಅಶೇರ ಸ್ತಂಭವನ್ನು ನಿಲ್ಲಿಸಿ, ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು, ಬಾಳನನ್ನು ಸೇವಿಸಿ ತಮ್ಮ ಪುತ್ರಪುತ್ರಿಯರನ್ನೂ ಬೆಂಕಿಯಲ್ಲಿ ಬಲಿಕೊಟ್ಟರು.</verse>
				<verse number="17">ಕಣಿಗಳನ್ನೂ, ಶಕುನಗಳನ್ನೂ ಬಳಸಿ, ಯೆಹೋವ ದೇವರಿಗೆ ಕೋಪ ಬರುವಂತೆ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.</verse>
				<verse number="18">ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಬಹುಕೋಪಗೊಂಡು, ಅವರನ್ನು ತಮ್ಮ ಸಮ್ಮುಖದಿಂದ ತೆಗೆದುಹಾಕಿದರು. ಯೆಹೂದದ ಗೋತ್ರದ ಹೊರತಾಗಿ ಇನ್ಯಾರೂ ಉಳಿಯಲಿಲ್ಲ.</verse>
				<verse number="19">ಯೆಹೂದದವರು ಸಹ ತಮ್ಮ ಯೆಹೋವ ದೇವರ ಆಜ್ಞೆಗಳನ್ನು ಕೈಕೊಳ್ಳದೆ, ಇಸ್ರಾಯೇಲರ ಪದ್ಧತಿಗಳಲ್ಲಿಯೇ ನಡೆದರು.</verse>
				<verse number="20">ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಸಂತತಿಯನ್ನೆಲ್ಲಾ ಅಲಕ್ಷ್ಯಮಾಡಿ, ಅವರನ್ನು ಕುಂದಿಸಿ, ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಡುವವರೆಗೆ ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು.</verse>
				<verse number="21">ದೇವರು ಇಸ್ರಾಯೇಲನ್ನು ದಾವೀದನ ಸಂತಾನದಿಂದ ವಿಭಾಗಿಸಿದಾಗ, ಅವರು ನೆಬಾಟನ ಮಗ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಆಗ ಯಾರೊಬ್ಬಾಮನು ಇಸ್ರಾಯೇಲನ್ನು ಯೆಹೋವ ದೇವರ ಮಾರ್ಗದಿಂದ ತಪ್ಪಿಸಿ, ಮಹಾ ಪಾಪಮಾಡಲು ಪ್ರೇರೇಪಿಸಿದನು.</verse>
				<verse number="22">ಇಸ್ರಾಯೇಲರು ಯಾರೊಬ್ಬಾಮನು ಮಾಡಿದ ಸಮಸ್ತ ಪಾಪಗಳಲ್ಲಿ ನಡೆದರು. ಅವುಗಳನ್ನು ತೊರೆದುಬಿಡಲಿಲ್ಲ.</verse>
				<verse number="23">ಯೆಹೋವ ದೇವರು ಪ್ರವಾದಿಗಳಾದ ತಮ್ಮ ಸೇವಕರ ಮುಖಾಂತರ ಎಚ್ಚರಿಸಿದ ಹಾಗೆ, ಇಸ್ರಾಯೇಲನ್ನು ದೇವರು ತಮ್ಮ ಸಮ್ಮುಖದಿಂದ ತೆಗೆದುಹಾಕಿದರು. ಹೀಗೆ ಇಸ್ರಾಯೇಲರು ಬಹು ಕಾಲದವರೆಗೂ ತಮ್ಮ ದೇಶದಿಂದ ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಇರಬೇಕಾಯಿತು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.</verse>
				<verse number="24">ಅಸ್ಸೀರಿಯದ ಅರಸನು ಬಾಬಿಲೋನ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಊರುಗಳ ಜನರನ್ನು ಬರಮಾಡಿ, ಅವರನ್ನು ಇಸ್ರಾಯೇಲರಿಗೆ ಬದಲಾಗಿ ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದನು. ಅವರು ಸಮಾರ್ಯವನ್ನು ಸ್ವತಂತ್ರಿಸಿಕೊಂಡು, ಅದರ ಪಟ್ಟಣಗಳಲ್ಲಿ ವಾಸಿಸಿದರು.</verse>
				<verse number="25">ಆದರೆ ಅವರು ಅಲ್ಲಿ ವಾಸಿಸಲು ಆರಂಭಿಸಿದಾಗ, ಯೆಹೋವ ದೇವರಿಗೆ ಭಯಪಡದ ಕಾರಣ, ಯೆಹೋವ ದೇವರು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದರು. ಅವು ಅವರಲ್ಲಿ ಕೆಲವರನ್ನು ಕೊಂದುಹಾಕಿದವು.</verse>
				<verse number="26">ಆದಕಾರಣ ಸೇವಕರು ಅಸ್ಸೀರಿಯದ ಅರಸನಿಗೆ, “ನೀನು ಸಮಾರ್ಯದ ಪಟ್ಟಣಗಳಲ್ಲಿ ಇರಿಸಿದ ಜನರು ಆ ದೇಶದ ದೇವರು ಅಪೇಕ್ಷಿಸುವುದನ್ನು ತಿಳಿಯದೆ ಇದ್ದಾರೆ. ಆದುದರಿಂದ, ದೇವರು ಅವರ ಮಧ್ಯದಲ್ಲಿ ಸಿಂಹಗಳನ್ನು ಕಳುಹಿಸಿದ್ದಾರೆ. ಅವು ಅವರನ್ನು ಕೊಂದುಹಾಕುತ್ತವೆ,” ಎಂದು ತಿಳಿಸಿದರು.</verse>
				<verse number="27">ಆಗ ಅಸ್ಸೀರಿಯದ ಅರಸನು, “ನೀವು ಅಲ್ಲಿಂದ ತೆಗೆದುಕೊಂಡು ಬಂದ ಯಾಜಕರಲ್ಲಿ ಒಬ್ಬನನ್ನು ಅಲ್ಲಿಗೆ ಕರೆದುಕೊಂಡು ಹೋಗಿರಿ. ಅವನು ಅಲ್ಲಿ ವಾಸವಾಗಿರಲಿ. ಅವನೇ ಅವರಿಗೆ ಆ ದೇಶದ ದೇವರು ಅಪೇಕ್ಷಿಸುವುದನ್ನು ಬೋಧಿಸಲಿ,” ಎಂದು ಆಜ್ಞಾಪಿಸಿದನು.</verse>
				<verse number="28">ಆಗ ಅವರು ಸಮಾರ್ಯದಿಂದ ಕರೆತಂದ ಯಾಜಕರಲ್ಲಿ, ಒಬ್ಬನು ಬಂದು ಬೇತೇಲಿನಲ್ಲಿ ವಾಸವಾಗಿದ್ದು, ಅವರು ಯೆಹೋವ ದೇವರಿಗೆ ಭಯಪಡತಕ್ಕ ವಿಧವನ್ನು ಅವರಿಗೆ ಬೋಧಿಸಿದನು.</verse>
				<verse number="29">ಆದರೆ ಪ್ರತಿ ಜನಾಂಗದವರೂ, ತಾವು ವಾಸಿಸಿದ ಪಟ್ಟಣಗಳಲ್ಲಿ ತಮಗೆ ದೇವರುಗಳನ್ನು ಮಾಡಿ, ಸಮಾರ್ಯದವರು ಮಾಡಿದ ಪೂಜಾಸ್ಥಳಗಳ ಮಂದಿರಗಳಲ್ಲಿ ಅವುಗಳನ್ನು ಇರಿಸಿದರು.</verse>
				<verse number="30">ಬಾಬಿಲೋನಿನ ಜನರು ಸುಕ್ಕೋತ್ ಬೆನೋತ್ ವಿಗ್ರಹವನ್ನು ಮಾಡಿದರು; ಕೂತವಿನ ಜನರು ನೇರ್ಗಲ್ ವಿಗ್ರಹವನ್ನು ಮಾಡಿಕೊಂಡರು; ಹಮಾತಿನ ಜನರು ಅಷೀಮಾವನ್ನು ಮಾಡಿಕೊಂಡರು;</verse>
				<verse number="31">ಅವ್ವೀಯರು ನಿಭಜ್, ತರ್ತಕ್ ಎಂಬ ದೇವತೆಗಳನ್ನು ಮಾಡಿದರು. ಸೆಫರ್ವಯಿಮಿನವರು ತಮ್ಮ ಕುಲದೇವತೆಗಳಾದ ಅದ್ರಮ್ಮೆಲೆಕ್, ಅನಮ್ಮೇಲೆಕ್ ಎಂಬುವುಗಳಿಗಾಗಿ ತಮ್ಮ ಮಕ್ಕಳನ್ನು ಅಗ್ನಿಬಲಿ ಕೊಡುತ್ತಿದ್ದರು.</verse>
				<verse number="32">ಅವರು ಯೆಹೋವ ದೇವರಿಗೆ ಆರಾಧನೆ ಸಲ್ಲಿಸಿದರು. ಆದರೂ ತಮ್ಮಲ್ಲಿರುವ ಪೂಜಾಸ್ಥಳಗಳ ಯಾಜಕರನ್ನು ನೇಮಿಸಿಕೊಂಡರು. ಇವರು ಪೂಜಾಸ್ಥಳಗಳ ಮೇಲಿರುವ ಮಂದಿರಗಳಲ್ಲಿ ಅವರಿಗೋಸ್ಕರ ಬಲಿಗಳನ್ನು ಅರ್ಪಿಸುತ್ತಾ ಇದ್ದರು.</verse>
				<verse number="33">ಅವರು ಯೆಹೋವ ದೇವರಿಗೆ ಆರಾಧನೆ ಮಾಡಿದರು. ಆದರೂ ಅವರು ಬಿಟ್ಟುಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳನ್ನು ಸಹ ಸೇವಿಸಿದರು.</verse>
				<verse number="34">ಈ ದಿವಸದವರೆಗೂ ಅವರು ತಮ್ಮ ಪೂರ್ವದ ಪದ್ಧತಿಯ ಪ್ರಕಾರ ಮಾಡುತ್ತಾರೆ. ಅವರು ಯೆಹೋವ ದೇವರಿಗೆ ಭಯಪಡದೆ, ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ, ತಮ್ಮ ನೀತಿಗಳ ಪ್ರಕಾರವಾಗಿಯೂ, ನಿಯಮದ ಪ್ರಕಾರವಾಗಿಯೂ ಯೆಹೋವ ದೇವರು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ.</verse>
				<verse number="35">ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿ ಅವರಿಗೆ ಆಜ್ಞಾಪಿಸಿ, “ನೀವು ಇತರ ದೇವರುಗಳಿಗೆ ಭಯಪಡದೆ ಅವುಗಳಿಗೆ ಅಡ್ಡಬೀಳದೆ, ಅವುಗಳನ್ನು ಸೇವಿಸದೆ, ಅವುಗಳಿಗೆ ಬಲಿಯನ್ನು ಅರ್ಪಿಸದೆ ಇರಬೇಕು.</verse>
				<verse number="36">ಆದರೆ ಮಹಾಶಕ್ತಿಯಿಂದಲೂ, ಚಾಚಿದ ಭುಜಪರಾಕ್ರಮದಿಂದಲೂ ಈಜಿಪ್ಟ್ ದೇಶದಿಂದ ನಿಮ್ಮನ್ನು ಬರಮಾಡಿದ ಯೆಹೋವ ದೇವರಿಗೆ ನೀವು ಭಯಪಟ್ಟು, ಅವರೊಬ್ಬರಿಗೇ ಅಡ್ಡಬಿದ್ದು, ಬಲಿ ಅರ್ಪಿಸಿರಿ.</verse>
				<verse number="37">ಇದಲ್ಲದೆ ದೇವರು ನಿಮಗೆ ಬರೆದುಕೊಟ್ಟ ಕಟ್ಟಳೆಗಳನ್ನೂ, ನೀತಿಗಳನ್ನೂ, ನಿಯಮವನ್ನೂ, ಆಜ್ಞೆಯನ್ನೂ ನೀವು ನಿರಂತರವಾಗಿ ಕೈಗೊಳ್ಳಲು ಎಚ್ಚರಿಕೆಯಾಗಿರಬೇಕು. ಇತರ ದೇವರುಗಳಿಗೆ ಭಯಪಡಬೇಡಿರಿ.</verse>
				<verse number="38">ನಾನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ನೀವು ಮರೆಯದೆ, ಇತರ ದೇವರುಗಳಿಗೆ ಭಯಪಡದೆ,</verse>
				<verse number="39">ನಿಮ್ಮ ದೇವರಾಗಿರುವ ಯೆಹೋವ ದೇವರಿಗೆ ಭಯಪಡಿರಿ. ಆಗ ಅವರು ನಿಮ್ಮನ್ನು ನಿಮ್ಮ ಶತ್ರುಗಳ ಕೈಯೊಳಗಿಂದ ವಿಮೋಚನೆ ಮಾಡುವರು,” ಎಂದು ಹೇಳಿದ್ದರು.</verse>
				<verse number="40">ಆದರೆ ಜನರು ಕೇಳದೆ ತಮ್ಮ ಪೂರ್ವದ ಪದ್ಧತಿಯ ಹಾಗೆ ಮಾಡಿದರು.</verse>
				<verse number="41">ಇವರು ಯೆಹೋವ ದೇವರಿಗೆ ಇಂದಿನವರೆಗೂ ಭಯಪಡದೆ, ತಮ್ಮ ಕೆತ್ತಿದ ವಿಗ್ರಹಗಳನ್ನು ಸೇವಿಸಿದರು. ಇವರ ಪಿತೃಗಳು ಮಾಡಿದ ಹಾಗೆ, ಇವರೂ, ಇವರ ಮಕ್ಕಳೂ, ಇವರ ಮೊಮ್ಮಕ್ಕಳೂ ಮಾಡುತ್ತಿದ್ದಾರೆ.</verse>
			</chapter>
			<chapter number="18">
				<verse number="1">ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದದ ಅರಸನಾಗಿದ್ದ ಆಹಾಜನ ಮಗ ಹಿಜ್ಕೀಯನು ಆಳಲು ಆರಂಭಿಸಿದನು.</verse>
				<verse number="2">ಅವನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಅಬೀಯಾ. ಅವಳು ಜೆಕರ್ಯನ ಮಗಳಾಗಿದ್ದಳು.</verse>
				<verse number="3">ಹಿಜ್ಕೀಯನು ತನ್ನ ತಂದೆ ದಾವೀದನು ಮಾಡಿದ ಪ್ರಕಾರ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.</verse>
				<verse number="4">ಹಿಜ್ಕೀಯನು ಉನ್ನತ ಪೂಜಾಸ್ಥಳಗಳನ್ನು ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅಶೇರ ಸ್ತಂಭಗಳನ್ನು ಕಡಿದುಹಾಕಿದನು. ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಮುರಿದುಬಿಟ್ಟನು. ಏಕೆಂದರೆ ಆ ದಿವಸಗಳವರೆಗೂ ಇಸ್ರಾಯೇಲರು ಅದಕ್ಕೆ ಧೂಪ ಸುಡುತ್ತಿದ್ದರು. ಅದನ್ನು ನೆಹುಷ್ಟಾನ್ ಎಂದು ಕರೆಯುತ್ತಿದ್ದರು.</verse>
				<verse number="5">ಹಿಜ್ಕೀಯನು ಇಸ್ರಾಯೇಲಿನ ಯೆಹೋವ ದೇವರಲ್ಲಿ ಭರವಸೆವುಳ್ಳವನಾಗಿದ್ದನು. ಅವನಿಗೆ ಮುಂಚೆ ಇದ್ದವರಲ್ಲಿಯೂ, ಅವನ ತರುವಾಯ ಯೆಹೂದದ ಸಮಸ್ತ ಅರಸುಗಳಲ್ಲಿಯೂ ಅವನ ಹಾಗೆ ಒಬ್ಬರೂ ಇರಲಿಲ್ಲ.</verse>
				<verse number="6">ಅವನು ಯೆಹೋವ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟುಬಿಡದೆ, ದೇವರನ್ನೇ ಆತುಕೊಂಡು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಆಜ್ಞೆಗಳನ್ನು ಕೈಗೊಂಡನು.</verse>
				<verse number="7">ಯೆಹೋವ ದೇವರು ಅವನ ಸಂಗಡ ಇದ್ದರು. ಹಿಜ್ಕೀಯನು ಯಾವ ಕಡೆಗೆ ಹೋದರೂ ಅವನಿಗೆ ಸಫಲವಾಯಿತು. ಅವನು ಅಸ್ಸೀರಿಯದ ಅರಸನನ್ನು ಸೇವಿಸದೆ, ಅವನ ಮೇಲೆ ತಿರುಗಿಬಿದ್ದನು.</verse>
				<verse number="8">ಅವರು ಕಾವಲು ಗೋಪುರದಿಂದ ಕೋಟೆಯುಳ್ಳ ಪಟ್ಟಣಗಳವರೆಗೂ ಫಿಲಿಷ್ಟಿಯರನ್ನು ಗಾಜಪ್ರಾಂತ್ಯದವರೆಗೆ ಸಂಹರಿಸಿದನು.</verse>
				<verse number="9">ಇಸ್ರಾಯೇಲಿನ ಅರಸನಾದ ಏಲನ ಮಗ ಹೋಶೇಯನ ಆಳ್ವಿಕೆಯ ಏಳನೆಯ ವರ್ಷ, ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಶಲ್ಮನೆಸೆರನು ಸಮಾರ್ಯಕ್ಕೆ ವಿರೋಧವಾಗಿ ಬಂದು ಅದಕ್ಕೆ ಮುತ್ತಿಗೆಹಾಕಿದನು.</verse>
				<verse number="10">ಮೂರು ವರ್ಷದ ತರುವಾಯ ಸಮಾರ್ಯವನ್ನು ಅಸ್ಸೀರಿಯದವರು ಸ್ವಾಧೀನಮಾಡಿಕೊಂಡರು. ಇಸ್ರಾಯೇಲಿನ ಅರಸನಾದ ಹೋಶೇಯನ ಒಂಬತ್ತನೆಯ ವರ್ಷವಾದ, ಹಿಜ್ಕೀಯನ ಆರನೆಯ ವರ್ಷದಲ್ಲಿ ಸಮಾರ್ಯವು ಸ್ವಾಧೀನವಾಯಿತು.</verse>
				<verse number="11">ಅಸ್ಸೀರಿಯದ ಅರಸನು ಇಸ್ರಾಯೇಲರನ್ನು ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಒಯ್ದು ಹಲಹ ಪ್ರಾಂತದಲ್ಲಿಯೂ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತದಲ್ಲಿಯೂ ಮತ್ತು ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.</verse>
				<verse number="12">ಏಕೆಂದರೆ ಅವರು ತಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ಅವರ ಒಡಂಬಡಿಕೆಯನ್ನೂ, ಯೆಹೋವ ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಸಮಸ್ತವನ್ನೂ ಮೀರಿದರು. ಅವರು ದೇವರ ಆಜ್ಞೆಗಳಿಗೆ ಕಿವಿಗೊಡಲಿಲ್ಲ, ಅವುಗಳಂತೆ ನಡೆಯಲಿಲ್ಲ.</verse>
				<verse number="13">ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.</verse>
				<verse number="14">ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಸ್ಸೀರಿಯದ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಾನು ತಪ್ಪು ಮಾಡಿದ್ದೇನೆ. ನನ್ನನ್ನು ಬಿಟ್ಟು ಹಿಂದಿರುಗಿ ಹೋಗು. ನೀನು ನನ್ನ ಮೇಲೆ ವಿಧಿಸುವುದನ್ನು ನಾನು ಕೊಡುತ್ತೇನೆ,” ಎಂದು ಹೇಳಿ ಕಳುಹಿಸಿದನು. ಆಗ ಅಸ್ಸೀರಿಯದ ಅರಸನು ಯೆಹೂದದ ಅರಸನಾದ ಹಿಜ್ಕೀಯನು ಹತ್ತು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನೂ, ಒಂದು ಸಾವಿರ ಕಿಲೋಗ್ರಾಂ ಬಂಗಾರವನ್ನೂ ಕೊಡಬೇಕೆಂದು ನೇಮಕಮಾಡಿದನು.</verse>
				<verse number="15">ಆದ್ದರಿಂದ ಹಿಜ್ಕೀಯನು ಯೆಹೋವ ದೇವರ ಆಲಯದಲ್ಲಿಯೂ, ಅರಸನ ಮನೆಯ ಬೊಕ್ಕಸಗಳಲ್ಲಿಯೂ, ಸಿಕ್ಕಿದ ಸಮಸ್ತ ಬೆಳ್ಳಿಯನ್ನೂ ಕೊಟ್ಟನು.</verse>
				<verse number="16">ಈ ಸಮಯದಲ್ಲಿ ಯೆಹೂದದ ಅರಸನಾದ ಹಿಜ್ಕೀಯನು, ಯೆಹೋವ ದೇವರ ಮಂದಿರದ ಕದಗಳ ಮೇಲೆಯೂ, ಸ್ತಂಭಗಳ ಮೇಲೆಯೂ ತಾನು ಹೊದಿಸಿದ್ದ ಬಂಗಾರವನ್ನೂ ಕತ್ತರಿಸಿ, ಅಸ್ಸೀರಿಯದ ಅರಸನಿಗೆ ಕೊಟ್ಟನು.</verse>
				<verse number="17">ಅಸ್ಸೀರಿಯದ ಅರಸನು ತನ್ನ ಅತಿ ಪ್ರಮುಖ ಅಧಿಕಾರಿಯನ್ನೂ, ಮುಖ್ಯ ನಾಯಕರನ್ನೂ, ಸೈನ್ಯಾಧಿಕಾರಿಯನ್ನೂ ಲಾಕೀಷಿನಿಂದ ದೊಡ್ಡ ಸೈನ್ಯದೊಂದಿಗೆ ರಬ್ಷಾಕೆ ಎಂಬವನನ್ನೂ ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅಗಸರ ಹೊಲದ ಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಸಮೀಪದಲ್ಲಿ ನಿಂತುಕೊಂಡರು.</verse>
				<verse number="18">ಅವರು ಅರಸನನ್ನು ಕರೆಕಳುಹಿಸಿದರು. ಅರಮನೆಯ ಕಾರ್ಯನಿರ್ವಾಹಕನಾದ ಹಿಲ್ಕೀಯನ ಮಗ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬುವರು ಅವರ ಬಳಿಗೆ ಬಂದರು.</verse>
				<verse number="19">ರಬ್ಷಾಕೆಯು ಅವರಿಗೆ, “ನೀವು ಹಿಜ್ಕೀಯನಿಗೆ ಹೀಗೆ ಹೇಳಬೇಕು: “ ‘ಮಹಾರಾಜನಾದ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ಈ ನಿನ್ನ ಭರವಸೆಗೆ ಆಧಾರ ಏನು?</verse>
				<verse number="20">ಯುದ್ಧಕ್ಕೆ ಬೇಕಾದ ಆಲೋಚನೆಯೂ, ಪರಾಕ್ರಮವೂ ಉಂಟೆಂದು ಹೇಳುವ ನಿನ್ನ ಮಾತು ಬರೀ ವ್ಯರ್ಥವಾದ ಮಾತುಗಳೇ, ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀಯೆ?</verse>
				<verse number="21">ಇಗೋ, ನೀನು ಜಜ್ಜಿದ ದಂಟಿಗೆ ಸಮಾನವಾಗಿರುವ ಈಜಿಪ್ಟಿನ ಮೇಲೆ ಭರವಸೆ ಇಟ್ಟಿರುವಿಯಷ್ಟೆ, ಅದರ ಮೇಲೆ ಮನುಷ್ಯನು ಊರಿಕೊಂಡರೆ ಅದು ಅವನ ಕೈಯನ್ನೇ ಚುಚ್ಚಿ ಗಾಯ ಮಾಡುವುದು! ಈಜಿಪ್ಟಿನ ಅರಸನಾದ ಫರೋಹನಲ್ಲಿ ಭರವಸೆ ಇಟ್ಟವರೆಲ್ಲರಿಗೂ ಇದೇ ಗತಿಯಾಗುವದು.</verse>
				<verse number="22">ಬಹುಶಃ ನೀವು, “ನಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿದ್ದೇವೆ,” ಎಂದು ಹೇಳಬಹುದು. “ಯೆರೂಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆ ಮಾಡಬೇಕು,” ಎಂದು ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ ಹಿಜ್ಕೀಯನು ಆಜ್ಞಾಪಿಸಿ, ಆ ಯೆಹೋವ ದೇವರ ಪೂಜಾಸ್ಥಳಗಳನ್ನೂ, ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೇ?</verse>
				<verse number="23">“ ‘ಹಾಗಾದರೆ ಈಗ ನೀನು ಅಸ್ಸೀರಿಯದ ಅರಸನಾದ ನನ್ನ ಯಜಮಾನನೊಂದಿಗೆ ಒಪ್ಪಂದ ಮಾಡಿಕೋ, ಆಗ ನಿನಗೆ ಎರಡು ಸಾವಿರ ಕುದುರೆಸವಾರರನ್ನು ಬಳಸಲು ಸಾಮರ್ಥ್ಯವಿದ್ದರೆ ನಾನು ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.</verse>
				<verse number="24">ಇದಾಗದಿದ್ದರೆ ನನ್ನ ಯಜಮಾನನ ಸೇವಕರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯನ್ನು ಹೇಗೆ ಎದುರಿಸುತ್ತೀ? ನೀನು ರಥಗಳಿಗೋಸ್ಕರವೂ, ರಾಹುತರಿಗೋಸ್ಕರವೂ ಈಜಿಪ್ಟಿನ ಮೇಲೆ ಭರವಸೆ ಇಟ್ಟಿದ್ದೀಯೋ?</verse>
				<verse number="25">ಈ ಸ್ಥಳವನ್ನು ನಾಶಮಾಡುವುದಕ್ಕೆ ಯೆಹೋವ ದೇವರ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಯೆಹೋವ ದೇವರೇ ನನಗೆ ಹೇಳಿದರು,’ ” ಎಂದನು.</verse>
				<verse number="26">ಆಗ ಹಿಲ್ಕೀಯನ ಮಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವರು ರಬ್ಷಾಕೆಗೆ, “ನೀನು ಮಾತನಾಡುವುದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ ಆದ್ದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು: ಅದು ನಮಗೆ ತಿಳಿಯುತ್ತದೆ ಆದರೆ ಹಿಬ್ರಿಯ ಭಾಷೆಯಲ್ಲಿ ಮಾತನಾಡಬೇಡ,” ಎಂದು ಹೇಳಿದರು.</verse>
				<verse number="27">ಆದರೆ ರಬ್ಷಾಕೆಯು ಅವರಿಗೆ, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಯಜಮಾನನ ಸಂಗಡವಾಗಲಿ ಮಾತ್ರ ಈ ಮಾತುಗಳನ್ನು ಹೇಳುವುದಕ್ಕೆ ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಿಮ್ಮ ಸಂಗಡ ಇದ್ದರೆ ನಿಮ್ಮ ಹಾಗೆ ಇವರೂ ಸಹ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ,” ಎಂದು ಹೇಳಿದನು.</verse>
				<verse number="28">ಆಗ ರಬ್ಷಾಕೆ ನಿಂತುಕೊಂಡು ಯೆಹೂದ್ಯರ ಭಾಷೆಯಾದ ಹಿಬ್ರಿಯದಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿದ್ದೇನೆಂದರೆ, “ನೀವು ಅಸ್ಸೀರಿಯದ ಮಹಾರಾಜನ ಮಾತನ್ನು ಕೇಳಿರಿ.</verse>
				<verse number="29">ಅರಸನು ಹೇಳುವುದೇನೆಂದರೆ: ಹಿಜ್ಕೀಯನ ಮಾತನ್ನು ಕೇಳಿ ಮೋಸಹೋಗಬೇಡಿರಿ. ಏಕೆಂದರೆ ಅವನು ನನ್ನ ಕೈಯಿಂದ ನಿಮ್ಮನ್ನು ಬಿಡಿಸಲು ಶಕ್ತನಲ್ಲ.</verse>
				<verse number="30">ಇದಲ್ಲದೆ, ‘ಯೆಹೋವ ದೇವರು ನಮ್ಮನ್ನು ನಿಶ್ಚಯವಾಗಿ ರಕ್ಷಿಸುವರು, ಈ ಪಟ್ಟಣವು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ, ಹಿಜ್ಕೀಯನು ನಿಮಗೆ ಯೆಹೋವ ದೇವರಲ್ಲಿ ಭರವಸೆ ಇಡುವಂತೆ ಮಾಡುವನು.</verse>
				<verse number="31">“ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ. ಏಕೆಂದರೆ ಅಸ್ಸೀರಿಯದ ಅರಸನು ಹೇಳುವುದೇನೆಂದರೆ: ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡು, ನನ್ನ ಬಳಿಗೆ ಹೊರಟುಬನ್ನಿರಿ, ಆಗ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷಾಫಲವನ್ನೂ, ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.</verse>
				<verse number="32">ಸ್ವಲ್ಪ ಕಾಲವಾದ ನಂತರ ನಾನು ಬಂದು, ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಎಣ್ಣೆಮರಗಳು, ಜೇನು ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ಜೀವವನ್ನು ಆಯ್ದುಕೊಳ್ಳಿರಿ, ಮರಣವನ್ನಲ್ಲ. “ ‘ಯೆಹೋವ ದೇವರು ನಮ್ಮನ್ನು ರಕ್ಷಿಸುವರು,’ ಎಂದು ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸಿ ತಪ್ಪು ಮಾರ್ಗದಲ್ಲಿ ನಡೆಸುವಾಗ, ಅವನ ಮಾತನ್ನು ಕೇಳಬೇಡಿರಿ.</verse>
				<verse number="33">ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಸ್ಸೀರಿಯದ ಅರಸನ ಕೈಯಿಂದ ಬಿಡಿಸಿದ್ದು ಉಂಟೋ?</verse>
				<verse number="34">ಹಮಾತ್, ಅರ್ಪಾದ್ ದೇವರುಗಳು ಎಲ್ಲಿ? ಸೆಫರ್ವಯಿಮ್, ಹೇನ, ಇವ್ವಗಳ ದೇವರುಗಳು ಎಲ್ಲಿ? ಅವರು ಸಮಾರ್ಯವನ್ನು ನನ್ನ ಕೈಯಿಂದ ಬಿಡಿಸಿಕೊಂಡರೋ?</verse>
				<verse number="35">ಈ ದೇಶಗಳ ಸಮಸ್ತ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ, ಯೆಹೋವ ದೇವರು ಯೆರೂಸಲೇಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು.</verse>
				<verse number="36">ಆದರೆ ಜನರು ಅವನಿಗೆ ಪ್ರತ್ಯುತ್ತರ ಕೊಡದೆ ಸುಮ್ಮನಿದ್ದರು. ಏಕೆಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.</verse>
				<verse number="37">ಆಗ ಅರಮನೆಯ ಮೇಲ್ವಿಚಾರಕನಾದ ಹಿಲ್ಕೀಯನ ಮಗ ಎಲ್ಯಾಕೀಮನೂ, ಕಾರ್ಯದರ್ಶಿಯಾದ ಶೆಬ್ನನೂ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬವನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಸೈನ್ಯಾಧಿಕಾರಿಯಾದ ರಬ್ಷಾಕೆ ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.</verse>
			</chapter>
			<chapter number="19">
				<verse number="1">ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ, ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿ ತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು, ಯೆಹೋವ ದೇವರ ಆಲಯಕ್ಕೆ ಹೋದನು.</verse>
				<verse number="2">ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.</verse>
				<verse number="3">ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ: ‘ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.</verse>
				<verse number="4">ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು,’ ” ಎಂದರು.</verse>
				<verse number="5">ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದು ಹೇಳಿದಾಗ,</verse>
				<verse number="6">ಯೆಶಾಯನು ಅವರಿಗೆ, “ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಕೇಳಿದಂಥ ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿದಂಥ ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.</verse>
				<verse number="7">ಇಗೋ, ನಾನು ಅವರ ಮೇಲೆ ಆತ್ಮವನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತನ್ನ ದೇಶಕ್ಕೆ ಹಿಂದಿರುಗುವನು. ಇದಲ್ಲದೆ ಅವನು ತನ್ನ ದೇಶದಲ್ಲಿ ಖಡ್ಗಕ್ಕೆ ತುತ್ತಾಗುವಂತೆ ಮಾಡುವೆನು,’ ” ಎಂದು ಹೇಳಿದನು.</verse>
				<verse number="8">ಹೀಗೆ ಸೈನ್ಯಾಧಿಕಾರಿಯು ಅಸ್ಸೀರಿಯದ ಅರಸನು ಲಾಕೀಷನ್ನು ಬಿಟ್ಟು ಹೊರಟಿದ್ದಾನೆಂದು ಕೇಳಿದಾಗ, ಅವನು ಲಿಬ್ನಕ್ಕೆ ಹೋಗಿ, ಅಲ್ಲಿ ಅರಸನು ಲಿಬ್ನದವರೊಂದಿಗೆ ಯುದ್ಧಮಾಡುತ್ತಿರುವುದನ್ನು ಕಂಡನು.</verse>
				<verse number="9">ಅಷ್ಟರಲ್ಲಿ ಕೂಷನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೊರಟಿದ್ದಾನೆಂಬ ಸುದ್ದಿಯನ್ನು ಅಸ್ಸೀರಿಯದ ಅರಸನು ಕೇಳಿ, ಹಿಜ್ಕೀಯನ ಬಳಿಗೆ ತಿರಿಗಿ ದೂತರನ್ನು ಕಳುಹಿಸಿ ಅವರಿಗೆ,</verse>
				<verse number="10">“ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನೆಂದರೆ: ನೀನು ನಂಬುವ ದೇವರು, ‘ಯೆರೂಸಲೇಮನ್ನು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ ನಿನ್ನನ್ನು ಮೋಸಗೊಳಿಸಾನು.</verse>
				<verse number="11">ಇಗೋ, ಅಸ್ಸೀರಿಯದ ಅರಸರು ಸಮಸ್ತ ದೇಶಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ನೀನು ಕೇಳಿದಿಯಲ್ಲಾ. ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವೆಯೋ?</verse>
				<verse number="12">ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ?</verse>
				<verse number="13">ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ,” ಎಂದು ಪತ್ರ ಬರೆದು ದೂತರ ಮುಖಾಂತರ ಕಳುಹಿಸಿದನು.</verse>
				<verse number="14">ಹಿಜ್ಕೀಯನು ಆ ದೂತರ ಕೈಯಿಂದ ಪತ್ರವನ್ನು ತೆಗೆದುಕೊಂಡು ಓದಿದನು, ಅನಂತರ ಯೆಹೋವ ದೇವರ ಆಲಯಕ್ಕೆ ಹೋಗಿ ಅದನ್ನು ಯೆಹೋವ ದೇವರ ಮುಂದೆ ತೆರೆದಿಟ್ಟನು.</verse>
				<verse number="15">ಇದಲ್ಲದೆ ಹಿಜ್ಕೀಯನು ಯೆಹೋವ ದೇವರ ಮುಂದೆ ಪ್ರಾರ್ಥನೆಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ.</verse>
				<verse number="16">ಯೆಹೋವ ದೇವರೇ, ನಿಮ್ಮ ಕಿವಿಗೊಟ್ಟು ಕೇಳಿರಿ. ಯೆಹೋವ ದೇವರೇ, ನಿಮ್ಮ ಕಣ್ಣುಗಳನ್ನು ತೆರೆದು ನೋಡಿರಿ. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತುಗಳನ್ನು ಕೇಳಿರಿ.</verse>
				<verse number="17">“ಯೆಹೋವ ದೇವರೇ, ಅಸ್ಸೀರಿಯದ ಅರಸರು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ, ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ.</verse>
				<verse number="18">ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ.</verse>
				<verse number="19">ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.</verse>
				<verse number="20">ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನೆಂದರೆ: “ಇಸ್ರಾಯೇಲಿನ ಯೆಹೋವ ದೇವರ ಮಾತಿದು: ನೀನು ಅಸ್ಸೀರಿಯದ ಅರಸನಾದ ಸನ್ಹೇರೀಬನನ್ನು ಕುರಿತು ಮಾಡಿದ ಪ್ರಾರ್ಥನೆಯನ್ನು ಕೇಳಿದ್ದೇನೆ.</verse>
				<verse number="21">ಅವನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: “ ‘ಕನ್ನಿಕೆಯಾದ ಚೀಯೋನ್ ಪುತ್ರಿಯು ನಿನ್ನನ್ನು ತಿರಸ್ಕರಿಸಿ, ನಿನಗೆ ಅಪಹಾಸ್ಯ ಮಾಡುತ್ತಾಳೆ. ಯೆರೂಸಲೇಮಿನ ಪುತ್ರಿಯು ನೀನು ಓಡಿ ಹೋಗುವಾಗ ತನ್ನ ತಲೆಯಾಡಿಸುತ್ತಾಳೆ.</verse>
				<verse number="22">ನೀನು ಯಾರನ್ನು ನಿಂದಿಸಿ, ಯಾರನ್ನು ದೂಷಿಸಿದೆ? ಯಾರಿಗೆ ವಿರೋಧವಾಗಿ ನಿನ್ನ ಧ್ವನಿಯನ್ನು ಎತ್ತಿದ್ದೀ? ನಿನ್ನ ಕಣ್ಣುಗಳು ಗರ್ವದಿಂದ ನೋಡಿದ್ದು ಯಾರನ್ನು? ಇಸ್ರಾಯೇಲಿನ ಪರಿಶುದ್ಧ ದೇವರಿಗೆ ವಿರೋಧವಾಗಿಯಲ್ಲವೇ?</verse>
				<verse number="23">ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿದ್ದೀ, “ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ, ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ, ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಗಡಿಸ್ಥಳಗಳಲ್ಲಿಯೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ.</verse>
				<verse number="24">ಪರದೇಶಗಳಲ್ಲಿ ನಾನು ಬಾವಿಗಳನ್ನು ಅಗೆದು, ನೀರು ಕುಡಿದಿದ್ದೇನೆ. ನನ್ನ ಅಂಗಾಲುಗಳಿಂದ ಈಜಿಪ್ಟಿನವರ ಎಲ್ಲಾ ನದಿಗಳನ್ನು ಬತ್ತಿಹೋಗುವಂತೆ ಮಾಡಿದ್ದೇನೆ.”</verse>
				<verse number="25">“ ‘ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ.</verse>
				<verse number="26">ಆದ್ದರಿಂದ ಅವುಗಳ ನಿವಾಸಿಗಳು ಬಲಹೀನರಾಗಿ ಹೆದರಿ ಆಶಾಭಂಗಹೊಂದಿ ನಾಚಿಕೆಪಟ್ಟರು. ಅವರು ಹೊಲದ ಹುಲ್ಲಿನಂತೆಯೂ, ಹಸಿರು ಸಸಿಗಳಂತೆಯೂ, ಮಾಳಿಗೆಯ ಮೇಲಿನ ಹುಲ್ಲಿನಂತೆಯೂ, ಬೆಳೆಯುವುದಕ್ಕಿಂತ ಮುಂಚೆಯೇ ಬಾಡಿಹೋಗುವ ಪೈರಿನಂತೆಯೂ ಅವರಿದ್ದಾರೆ.</verse>
				<verse number="27">“ ‘ಆದರೆ ನೀನು ಎಲ್ಲಿ ವಾಸಿಸುವೆಯೆಂಬುದನ್ನು ನೀನು ಯಾವಾಗ ಬರುವೆ ಹೋಗುವೆ ಎಂಬುದನ್ನು ನೀನು ನನ್ನ ಮೇಲೆ ಹೇಗೆ ಕೋಪಿಸಿಕೊಳ್ಳುವೆ? ಎಂಬುದನ್ನು ನಾನು ಬಲ್ಲೆನು.</verse>
				<verse number="28">ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ, ನಿನ್ನ ಅಹಂಕಾರವೂ ನನ್ನ ಕಿವಿಗಳಿಗೆ ತಲುಪಿದೆ. ಆದ್ದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ, ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ, ನೀನು ಬಂದ ದಾರಿಯಿಂದಲೇ ನಿನ್ನನ್ನು ಹಿಂದಿರುಗಿಸುವೆನು.’</verse>
				<verse number="29">“ಹಿಜ್ಕೀಯನೇ, ಇದು ನಿಮಗೆ ಸಂಕೇತವಾಗಿರುವದು, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವಿರಿ.</verse>
				<verse number="30">ಯೆಹೂದದ ಮನೆತನದಲ್ಲಿ ತಪ್ಪಿಸಿಕೊಂಡು ಉಳಿದವರು ತಿರುಗಿ ದೇಶದಲ್ಲಿ ಬೇರೂರಿ ನೆಲೆಗೊಂಡು ಅಭಿವೃದ್ಧಿಯಾಗುವರು.</verse>
				<verse number="31">ಏಕೆಂದರೆ ಯೆರೂಸಲೇಮಿನಿಂದ ಉಳಿದವರೂ, ಚೀಯೋನ್ ಪರ್ವತದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೇನಾಧೀಶ್ವರ ಯೆಹೋವ ದೇವರ ಆಸಕ್ತಿಯು ಇದನ್ನು ನೆರವೇರಿಸುವುದು.</verse>
				<verse number="32">“ಆದ್ದರಿಂದ ಯೆಹೋವ ದೇವರು ಅಸ್ಸೀರಿಯದ ಅರಸನನ್ನು ಕುರಿತು ಹೀಗೆ ಹೇಳುತ್ತಾರೆ: “ ‘ಅವನು ಈ ಪಟ್ಟಣದೊಳಗೆ ಬರುವುದಿಲ್ಲ; ಅಲ್ಲಿ ಬಾಣವನ್ನು ಎಸೆಯುವುದಿಲ್ಲ; ಗುರಾಣಿಯೊಂದಿಗೆ ಅದರ ಮುಂದೆ ಬರಲಾರನು; ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಲು ದಿಬ್ಬವನ್ನು ನಿರ್ಮಿಸುವುದಿಲ್ಲ.</verse>
				<verse number="33">ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು, ಈ ಪಟ್ಟಣದೊಳಗೆ ಬರುವುದೇ ಇಲ್ಲ, ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="34">ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.’ ”</verse>
				<verse number="35">ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.</verse>
				<verse number="36">ಆಗ ಅಸ್ಸೀರಿಯದ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.</verse>
				<verse number="37">ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಆಲಯದಲ್ಲಿ ಆರಾಧನೆ ಮಾಡುತ್ತಿರುವಾಗ, ಅವನ ಮಕ್ಕಳಾದ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಖಡ್ಗದಿಂದ ಕೊಂದು, ಅರಾರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗ ಏಸರ್‌ಹದ್ದೋನನು ಅವನಿಗೆ ಬದಲಾಗಿ ಅರಸನಾದನು.</verse>
			</chapter>
			<chapter number="20">
				<verse number="1">ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನಾದ ಪ್ರವಾದಿ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ, ಏಕೆಂದರೆ ನೀನು ಬದುಕದೆ ಸಾಯುವೆ, ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಹೇಳಿದನು.</verse>
				<verse number="2">ಆಗ ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ,</verse>
				<verse number="3">“ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ,” ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು.</verse>
				<verse number="4">ಯೆಶಾಯನು ಅರಮನೆಯ ಆವರಣದ ಮಧ್ಯಕ್ಕೆ ಹೋಗುವ ಮುಂಚೆ ಯೆಹೋವ ದೇವರ ವಾಕ್ಯವು ಅವನಿಗೆ ಬಂದಿತು,</verse>
				<verse number="5">ದೇವರು ಅವನಿಗೆ, “ನೀನು ಹಿಂದಿರುಗಿ ಹೋಗಿ ನನ್ನ ಜನರ ನಾಯಕನಾದ ಹಿಜ್ಕೀಯನಿಗೆ, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ. ಮೂರನೆಯ ದಿವಸದಲ್ಲಿ ಯೆಹೋವ ದೇವರ ಆಲಯಕ್ಕೆ ಹೋಗುವೆ.</verse>
				<verse number="6">ಇದಲ್ಲದೆ ನಾನು ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಾಗಿ ಕೂಡಿಸುತ್ತೇನೆ. ನಿನ್ನನ್ನೂ, ಈ ಪಟ್ಟಣವನ್ನೂ ಅಸ್ಸೀರಿಯದ ಅರಸನ ಕೈಯಿಂದ ಬಿಡಿಸುವೆನು. ಈ ಪಟ್ಟಣವನ್ನು ನನ್ನ ನಿಮಿತ್ತವಾಗಿಯೂ, ನನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ ಕಾಪಾಡುವೆನು,’ ಎಂದು ಹೇಳು,” ಎಂದರು.</verse>
				<verse number="7">ಆಗ ಯೆಶಾಯನು ಅಂಜೂರದ ಹಣ್ಣುಗಳ ಉಂಡೆಯನ್ನು ತೆಗೆದುಕೊಂಡು ಬರಲು ಹೇಳಿದ್ದನು. ಅವರು ಹಾಗೆಯೇ ತೆಗೆದುಕೊಂಡು ಬಂದು ಹುಣ್ಣಿನ ಮೇಲೆ ಹಾಕಿದ್ದರಿಂದ ಅವನು ಗುಣಹೊಂದಿದನು.</verse>
				<verse number="8">ಹಿಜ್ಕೀಯನು ಯೆಶಾಯನಿಗೆ, “ಯೆಹೋವ ದೇವರು ನನ್ನನ್ನು ಸ್ವಸ್ಥಮಾಡುವರೆಂಬುದಕ್ಕೆ ಮತ್ತು ನಾನು ಮೂರನೆಯ ದಿವಸದಲ್ಲಿ ಯೆಹೋವ ದೇವರ ಆಲಯಕ್ಕೆ ಹೋಗುವೆನೆಂಬುದಕ್ಕೆ ನನಗೆ ಗುರುತೇನು?” ಎಂದು ಕೇಳಿದನು.</verse>
				<verse number="9">ಯೆಶಾಯನು, “ಯೆಹೋವ ದೇವರು, ತಾವು ಹೇಳಿದ ಕಾರ್ಯವನ್ನು ಮಾಡುವರೆಂಬುದಕ್ಕೆ ಯೆಹೋವ ದೇವರ ಕಡೆಯಿಂದ ನಿನಗೆ ಉಂಟಾಗುವ ಗುರುತು, ನೆರಳು ಹತ್ತು ಮೆಟ್ಟಲು ಮುಂದಕ್ಕೆ ಹೋಗಬೇಕೋ? ಇಲ್ಲವೆ ಹತ್ತು ಮೆಟ್ಟಲು ಹಿಂದಕ್ಕೆ ಬರಬೇಕೋ?” ಎಂದು ಕೇಳಿದನು.</verse>
				<verse number="10">ಅದಕ್ಕೆ ಹಿಜ್ಕೀಯನು, “ನೆರಳು ಹತ್ತು ಮೆಟ್ಟಲು ಮುಂದೆ ಹೋಗುವುದು ಸಾಮಾನ್ಯ, ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬರುವಂತೆ ಮಾಡು,” ಎಂದನು.</verse>
				<verse number="11">ಆಗ ಪ್ರವಾದಿಯಾದ ಯೆಶಾಯನು ಯೆಹೋವ ದೇವರಿಗೆ ಮೊರೆಯಿಟ್ಟದ್ದರಿಂದ, ದೇವರು ಆಹಾಜನ ಮೆಟ್ಟಲುಗಳಲ್ಲಿ ಇಳಿದು ಹೋದ ನೆರಳನ್ನು ಹತ್ತು ಮೆಟ್ಟಲು ಹಿಂದಕ್ಕೆ ಬರಮಾಡಿದರು.</verse>
				<verse number="12">ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬಿಲೋನಿನ ಅರಸನೂ ಆದ ಮೆರೋದಕ್ ಬಲದಾನ್ ಎಂಬವನು, ಹಿಜ್ಕೀಯನು ಅಸ್ವಸ್ಥನಾಗಿದ್ದಾನೆಂದು ಕೇಳಿದ್ದರಿಂದ ಪತ್ರಗಳನ್ನೂ, ಉಡುಗೊರೆಗಳನ್ನೂ ಹಿಜ್ಕೀಯನ ಬಳಿಗೆ ಕಳುಹಿಸಿದನು.</verse>
				<verse number="13">ಹಿಜ್ಕೀಯನು ಅವರ ಮಾತು ಕೇಳಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳ ತೈಲ ಮೊದಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ, ಆಯುಧ ಶಾಲೆಯನ್ನೂ, ತನ್ನ ಭಂಡಾರದಲ್ಲಿ ಇರುವುದೆಲ್ಲವನ್ನೂ ತೋರಿಸಿದನು. ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ, ತನ್ನ ಸಮಸ್ತ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.</verse>
				<verse number="14">ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಆ ಮನುಷ್ಯರು ಎಲ್ಲಿಂದ ಬಂದವರು ಮತ್ತು ಅವರು ನಿನಗೆ ಏನು ಹೇಳಿದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ಬಹುದೂರ ದೇಶವಾದ ಬಾಬಿಲೋನಿನಿಂದ ಬಂದವರು,” ಎಂದು ಹೇಳಿದನು.</verse>
				<verse number="15">ಅದಕ್ಕೆ ಯೆಶಾಯನು ಪುನಃ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನನ್ನು ನೋಡಿದರು?” ಎಂದು ಕೇಳಿದನು. ಹಿಜ್ಕೀಯನು, “ನನ್ನ ಅರಮನೆಯಲ್ಲಿ ಇರುವುದೆಲ್ಲವನ್ನು ಅವರು ನೋಡಿದರು, ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇಲ್ಲ,” ಎಂದು ಉತ್ತರಕೊಟ್ಟನು.</verse>
				<verse number="16">ಆಗ ಯೆಶಾಯನು ಹಿಜ್ಕೀಯನಿಗೆ, “ಯೆಹೋವ ದೇವರ ವಾಕ್ಯವನ್ನು ಕೇಳು:</verse>
				<verse number="17">ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ನಿನ್ನ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಕೊಂಡೊಯ್ಯುವ ದಿವಸ ಬರುವುದು. ಇಲ್ಲಿ ಏನೂ ಉಳಿಯುವುದಿಲ್ಲ.</verse>
				<verse number="18">ಬಾಬಿಲೋನಿನವರು ನಿನ್ನಿಂದ ಹುಟ್ಟುವಂಥ, ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು, ಅವರು ಬಾಬಿಲೋನಿನ ರಾಜನ ಅರಮನೆಯಲ್ಲಿ ಕಂಚುಕಿಗಳಾಗಿರುವರು,” ಎಂದನು.</verse>
				<verse number="19">ಆಗ ಹಿಜ್ಕೀಯನು, “ನೀನು ಹೇಳಿದ ಯೆಹೋವ ದೇವರ ವಾಕ್ಯವು ಒಳ್ಳೆಯದೇ,” ಎಂದು ಯೆಶಾಯನಿಗೆ ಹೇಳಿದನು. ಅವನು, ಹೇಗೂ ನನ್ನ ಜೀವಮಾನದಲ್ಲಿ ಸಮಾಧಾನವು, ಭದ್ರತೆಯೂ ಇರುವುವು, ಎಂದುಕೊಂಡನು.</verse>
				<verse number="20">ಹಿಜ್ಕೀಯನ ಇತರ ಕಾರ್ಯಗಳೂ, ಅವನ ಸಮಸ್ತ ಪರಾಕ್ರಮವೂ ಅವನು ಕೆರೆ ಮತ್ತು ಕಾಲುವೆಗಳನ್ನು ಮಾಡಿಸಿ ಪಟ್ಟಣದಲ್ಲಿ ನೀರನ್ನು ಬರಮಾಡಿದ್ದೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="21">ಹಿಜ್ಕೀಯನು ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಮಗ ಮನಸ್ಸೆಯು ಅವನಿಗೆ ಬದಲಾಗಿ ಅರಸನಾದನು.</verse>
			</chapter>
			<chapter number="21">
				<verse number="1">ಮನಸ್ಸೆಯು ಅರಸನಾದಾಗ ಹನ್ನೆರಡು ವರ್ಷದವನಾಗಿದ್ದನು. ಅವನು ಐವತ್ತೈದು ವರ್ಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಹೆಫ್ಚಿಬಾ.</verse>
				<verse number="2">ಆದರೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಜನಾಂಗಗಳ ಅಸಹ್ಯವಾದವುಗಳನ್ನು ಅವನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.</verse>
				<verse number="3">ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು.</verse>
				<verse number="4">ಇದಲ್ಲದೆ, “ಯೆರೂಸಲೇಮಿನಲ್ಲಿ ನನ್ನ ಹೆಸರನ್ನು ಸ್ಥಾಪಿಸುವೆನು,” ಎಂದು ಯೆಹೋವ ದೇವರು ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ಅವನು ಬಲಿಪೀಠಗಳನ್ನು ಕಟ್ಟಿಸಿದನು.</verse>
				<verse number="5">ಯೆಹೋವ ದೇವರ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಸಮಸ್ತ ನಕ್ಷತ್ರಮಂಡಲಕ್ಕಾಗಿ ಬಲಿಪೀಠಗಳನ್ನು ಕಟ್ಟಿಸಿದನು.</verse>
				<verse number="6">ಇದಲ್ಲದೆ ಮನಸ್ಸೆಯು ತನ್ನ ಸ್ವಂತ ಮಗನನ್ನು ಬೆಂಕಿಯಲ್ಲಿ ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನು ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.</verse>
				<verse number="7">“ಈ ಆಲಯದಲ್ಲಿಯೂ, ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿಯೂ, ನಾನು ಆಯ್ದುಕೊಂಡ ಯೆರೂಸಲೇಮಿನಲ್ಲಿಯೂ, ನನ್ನ ನಾಮವನ್ನು ಯುಗಯುಗಕ್ಕೂ ಇರುವಂತೆ ಮಾಡುವೆನು,” ಎಂದು ಯೆಹೋವ ದೇವರು ದಾವೀದನಿಗೂ, ಅವನ ಮಗನಾದ ಸೊಲೊಮೋನನಿಗೂ ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ತಾನು ಮಾಡಿದ ಅಶೇರ ವಿಗ್ರಹಸ್ತಂಭವನ್ನು ಇಟ್ಟನು.</verse>
				<verse number="8">ಯೆಹೋವ ದೇವರು, “ನಾನು ಅವರಿಗೆ ಆಜ್ಞಾಪಿಸಿದ ಎಲ್ಲದರ ಪ್ರಕಾರ ಮತ್ತು ನನ್ನ ಸೇವಕನಾದ ಮೋಶೆಯು ಅವರಿಗೆ ಆಜ್ಞಾಪಿಸಿದ ಸಮಸ್ತ ನಿಯಮದ ಪ್ರಕಾರ ಕೈಗೊಂಡು ನಡೆಯುವುದರಲ್ಲಿ ಅವರು ಜಾಗರೂಕರಾಗಿದ್ದರೆ, ನಾನು ಅವರ ಪಿತೃಗಳಿಗೆ ಕೊಟ್ಟ ದೇಶದಿಂದ ಪುನಃ ಇಸ್ರಾಯೇಲರು ಅಲೆದಾಡುವಂತೆ ಮಾಡುವುದಿಲ್ಲ,” ಎಂದು ಹೇಳಿದ್ದರು.</verse>
				<verse number="9">ಆದರೆ ಜನರು ಕೇಳದೆ ಹೋದರು. ಇಸ್ರಾಯೇಲರ ಮುಂದೆಯೇ ಯೆಹೋವ ದೇವರಿಂದ ನಾಶಹೊಂದಿದ ಇತರ ಜನಾಂಗಗಳಿಗಿಂತ ಅಧಿಕವಾಗಿ ಕೆಟ್ಟದ್ದನ್ನು ಮಾಡಲು ಮನಸ್ಸೆಯು ಅವರನ್ನು ಪ್ರೇರೇಪಿಸಿದನು.</verse>
				<verse number="10">ಯೆಹೋವ ದೇವರು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ್ದೇನೆಂದರೆ,</verse>
				<verse number="11">“ಯೆಹೂದದ ಅರಸನಾದ ಮನಸ್ಸೆಯು ತನ್ನ ಮುಂದೆ ಇದ್ದ ಅಮೋರಿಯರು ಮಾಡಿದ ಕೆಟ್ಟವುಗಳಿಗಿಂತಲೂ ಅಸಹ್ಯವಾದವುಗಳನ್ನು ಮಾಡಿದ್ದರಿಂದಲೂ, ಯೆಹೂದವನ್ನು ತನ್ನ ವಿಗ್ರಹಗಳಿಂದ ಪಾಪಕ್ಕೆ ಪ್ರೇರೇಪಿಸಿದ್ದರಿಂದಲೂ,</verse>
				<verse number="12">ಇಸ್ರಾಯೇಲಿನ ಯೆಹೋವ ದೇವರಾದ ನಾನು ಯೆರೂಸಲೇಮಿನ ಮೇಲೆಯೂ, ಯೆಹೂದದ ಮೇಲೆಯೂ ಕೇಡನ್ನು ಬರಮಾಡುವೆನು. ಅದನ್ನು ಕೇಳುವವನ ಎರಡು ಕಿವಿಗಳು ಕಿರಗುಟ್ಟುವುವು.</verse>
				<verse number="13">ನಾನು ಯೆರೂಸಲೇಮಿನ ಮೇಲೆ ಸಮಾರ್ಯದ ವಿರುದ್ಧ ಬಳಸಿದ ನೂಲನ್ನೂ, ಅಹಾಬನ ಮನೆಯ ವಿರುದ್ಧ ಬಳಸಿದ ಮಟ್ಟಗೋಲನ್ನೂ ಚಾಚಿ, ಒಬ್ಬನು ತಟ್ಟೆಯನ್ನು ಒರೆಸಿದಂತೆ ಅದನ್ನು ಒರೆಸಿ ತಲೆಕೆಳಗಾಗಿ ಹಾಕುವ ಹಾಗೆ ನಾನು ಯೆರೂಸಲೇಮನ್ನು ಅಳಿಸಿಬಿಡುವೆನು.</verse>
				<verse number="14">ಇದಲ್ಲದೆ ನಾನು ನನ್ನ ಬಾಧ್ಯತೆಗೆ ಉಳಿದಿರುವುದನ್ನು ಬಿಟ್ಟುಬಿಟ್ಟು, ಅವರನ್ನು ಅವರ ಶತ್ರುಗಳ ಕೈಗೆ ಒಪ್ಪಿಸಿಬಿಡುವೆನು. ಅವರು ತಮ್ಮ ಶತ್ರುಗಳಿಗೆ ಕೊಳ್ಳೆಯೂ, ಸೂರೆಯೂ ಆಗಿ ಹೋಗುವರು.</verse>
				<verse number="15">ಏಕೆಂದರೆ ಅವರ ತಂದೆಗಳು ಈಜಿಪ್ಟಿನಿಂದ ಹೊರಟ ದಿವಸ ಮೊದಲುಗೊಂಡು, ಇಂದಿನವರೆಗೂ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ನನಗೆ ಕೋಪವನ್ನು ಎಬ್ಬಿಸಿದ್ದಾರೆ, ಎಂದು ಹೇಳುತ್ತಾರೆ,” ಎಂಬುದೇ.</verse>
				<verse number="16">ಇದಲ್ಲದೆ ಮನಸ್ಸೆಯು ಯೆಹೋವ ದೇವರ ದೃಷ್ಟಿಯಲ್ಲಿ ಕೇಡನ್ನು ಮಾಡಿದ್ದರಲ್ಲಿ ಯೆಹೂದವು ಪಾಪವನ್ನು ಮಾಡಲು ಪ್ರೇರೇಪಿಸಿದ ತನ್ನ ಪಾಪದ ಹೊರತು ಅವನು ಯೆರೂಸಲೇಮನ್ನು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ತಾನು ಬಹು ಹೆಚ್ಚಾಗಿ ಚೆಲ್ಲಿದ ನಿರಪರಾಧದ ರಕ್ತದಿಂದ ತುಂಬಿಸಿದನು.</verse>
				<verse number="17">ಮನಸ್ಸೆಯ ಇತರ ಕ್ರಿಯೆಗಳೂ, ಅವನು ಮಾಡಿದ ಸಮಸ್ತವೂ, ಅವನು ಮಾಡಿದ ಪಾಪವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="18">ಮನಸ್ಸೆಯು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು, ಅವನ ಅರಮನೆಯ ತೋಟವಾದ ಉಜ್ಜನ ತೋಟದಲ್ಲಿ ಅವನ ಶವವನ್ನು ಸಮಾಧಿಮಾಡಿದರು. ಅವನ ಮಗ ಆಮೋನನು ಅವನಿಗೆ ಬದಲಾಗಿ ಅರಸನಾದನು.</verse>
				<verse number="19">ಆಮೋನನು ಅರಸನಾದಾಗ ಇಪ್ಪತ್ತೆರಡು ವರ್ಷದವನಾಗಿದ್ದನು, ಅವನು ಯೆರೂಸಲೇಮಿನಲ್ಲಿ ಎರಡು ವರ್ಷ ಆಳಿದನು. ಅವನ ತಾಯಿಯು ಯೋತ್ಬಾ ಊರಿನ ಹಾರೂಚನ ಮಗಳಾದ ಮೆಷುಲ್ಲೇಮೆತಳು.</verse>
				<verse number="20">ಅವನು ತನ್ನ ತಂದೆ ಮನಸ್ಸೆಯು ಮಾಡಿದ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದನು.</verse>
				<verse number="21">ಅವನು ತನ್ನ ಪಿತೃಗಳ ದೇವರಾದ ಯೆಹೋವ ದೇವರ ಮಾರ್ಗವನ್ನು ಬಿಟ್ಟುಬಿಟ್ಟು,</verse>
				<verse number="22">ತನ್ನ ತಂದೆಯು ನಡೆದ ಸಮಸ್ತ ಮಾರ್ಗದಲ್ಲಿ ನಡೆದು, ತನ್ನ ತಂದೆಯು ಸೇವಿಸಿದ ವಿಗ್ರಹಗಳನ್ನು ಸೇವಿಸಿ, ಅವುಗಳಿಗೆ ಅಡ್ಡಬಿದ್ದನು.</verse>
				<verse number="23">ಆಮೋನನ ಸೇವಕರು ಅವನ ವಿರುದ್ಧ ಒಳಸಂಚುಮಾಡಿ, ಅರಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು.</verse>
				<verse number="24">ಆದರೆ ದೇಶದ ಜನರು ಅರಸನಾದ ಆಮೋನನ ವಿರುದ್ಧ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ, ಅವನ ಮಗ ಯೋಷೀಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.</verse>
				<verse number="25">ಆಮೋನನು ಮಾಡಿದ ಅವನ ಇತರ ಕ್ರಿಯೆಗಳು ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="26">ಅವನ ಶವವನ್ನು, ಉಜ್ಜನ ತೋಟದಲ್ಲಿ ಅವನು ಮೊದಲೇ ತನಗೋಸ್ಕರ ಸಿದ್ದಪಡಿಸಿಟ್ಟಿದ್ದ ಸಮಾಧಿಯಲ್ಲಿ ಹೂಣಿಟ್ಟರು. ಅವನ ಮಗ ಯೋಷೀಯನು ಅವನಿಗೆ ಬದಲಾಗಿ ಅರಸನಾದನು.</verse>
			</chapter>
			<chapter number="22">
				<verse number="1">ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದನು, ಅವನು ಮೂವತ್ತೊಂದು ವರ್ಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿ ಬೊಚ್ಕತಿನ ಅದಾಯನ ಮಗಳಾದ ಯೆದೀದಾ ಎಂಬವಳು.</verse>
				<verse number="2">ಅವನು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದನ್ನು ಮಾಡಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗದೆ ತನ್ನ ಪೂರ್ವಜನಾದ ದಾವೀದನ ಮಾರ್ಗಗಳಲ್ಲಿಯೇ ನಡೆದನು.</verse>
				<verse number="3">ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಅರಸನು ಕಾರ್ಯದರ್ಶಿಯಾದ ಮೆಷುಲ್ಲಾಮನ ಮಗ, ಅಚಲ್ಯನ ಮಗನಾದ ಶಾಫಾನನನ್ನು ಯೆಹೋವ ದೇವರ ಆಲಯಕ್ಕೆ ಕಳುಹಿಸಿ,</verse>
				<verse number="4">“ನೀನು ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗು. ಅವನು ಯೆಹೋವ ದೇವರ ಆಲಯದ ದ್ವಾರಪಾಲಕರು ಜನರಿಂದ ತೆಗೆದುಕೊಂಡು ಕೂಡಿಸಿದ ಹಣವನ್ನು ಲೆಕ್ಕ ಮಾಡಲಿ.</verse>
				<verse number="5">ಅವರು ಅದನ್ನು ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಒಪ್ಪಿಸಲಿ.</verse>
				<verse number="6">ಆಲಯ ದುರಸ್ತಿ ಮಾಡುವಂತೆ ಯೆಹೋವ ದೇವರ ಆಲಯದಲ್ಲಿ ಕೆಲಸ ಮಾಡುವವರಾದ ಬಡಗಿಯರಿಗೂ, ಶಿಲ್ಪಿಗಾರರಿಗೂ, ಕಲ್ಲುಕೆಲಸದವರಿಗೂ ಕೊಟ್ಟು, ಆಲಯವನ್ನು ದುರಸ್ತಿ ಮಾಡಲು ಮರಗಳನ್ನೂ, ಕೆತ್ತಿದ ಕಲ್ಲುಗಳನ್ನೂ ಕೊಂಡುಕೊಳ್ಳುವುದಕ್ಕೆ ಕೊಡಲಿ.</verse>
				<verse number="7">ಆದರೆ ಅವರು ನಂಬಿಗಸ್ತರಾಗಿ ಕೆಲಸ ಮಾಡಿದ್ದರಿಂದ, ಅವರ ಕೈಗೆ ಒಪ್ಪಿಸಿದ ಹಣವನ್ನು ಕುರಿತು ಅವರಿಂದ ಲೆಕ್ಕ ಕೇಳುವ ಅವಶ್ಯಕತೆ ಇಲ್ಲ, ಎಂದು ಹೇಳು,” ಎಂದನು.</verse>
				<verse number="8">ಆಗ ಮಹಾಯಾಜಕನಾದ ಹಿಲ್ಕೀಯನು ಕಾರ್ಯದರ್ಶಿಯಾದ ಶಾಫಾನನಿಗೆ, “ನನಗೆ ಯೆಹೋವ ದೇವರ ಆಲಯದಲ್ಲಿ ಮೋಶೆಯ ನಿಯಮದ ಗ್ರಂಥವು ಸಿಕ್ಕಿರುತ್ತದೆ,” ಎಂದನು. ಹಿಲ್ಕೀಯನು ಆ ಗ್ರಂಥವನ್ನು ಶಾಫಾನನಿಗೆ ಒಪ್ಪಿಸಿದನು. ಅವನು ಅದನ್ನು ಓದಿದನು.</verse>
				<verse number="9">ಕಾರ್ಯದರ್ಶಿಯಾದ ಶಾಫಾನನು ಅರಸನ ಬಳಿಗೆ ಬಂದು ಅರಸನಿಗೆ, “ಯೆಹೋವ ದೇವರ ಆಲಯದಲ್ಲಿ ದೊರಕಿದ ಹಣವನ್ನು ನಿನ್ನ ಸೇವಕರು ಕೂಡಿಸಿ, ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಒಪ್ಪಿಸಿದ್ದಾರೆ,” ಎಂದನು.</verse>
				<verse number="10">ಇದಲ್ಲದೆ, “ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಒಪ್ಪಿಸಿದ್ದಾನೆ,” ಎಂದು ತೋರಿಸಿ, ಶಾಫಾನನು ಅದನ್ನು ಅರಸನ ಮುಂದೆ ಓದಿದನು.</verse>
				<verse number="11">ಅರಸನು ಮೋಶೆಯ ನಿಯಮದ ಪುಸ್ತಕದ ಮಾತುಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡನು.</verse>
				<verse number="12">ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ, ಶಾಫಾನನ ಮಗನಾದ ಅಹೀಕಾಮನಿಗೂ, ಮೀಕಾಯನ ಮಗನಾದ ಅಕ್ಬೋರನಿಗೂ, ಕಾರ್ಯದರ್ಶಿಯಾದ ಶಾಫಾನನಿಗೂ, ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ,</verse>
				<verse number="13">“ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಜನರಿಗೋಸ್ಕರವೂ, ಸಮಸ್ತ ಯೆಹೂದ್ಯರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ದೇವರ ಮಹಾಕೋಪಕ್ಕೆ ಪಾತ್ರರಾಗಿದ್ದೇವೆ,” ಎಂದನು.</verse>
				<verse number="14">ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಅಸಾಯ ಎಂಬವರು ಪ್ರವಾದಿನಿ ಹುಲ್ದಳ ಬಳಿಗೆ ವಿಚಾರಿಸಲು ಹೋದರು. ಆಕೆಯು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಗಳ ಮೇಲ್ವಿಚಾರಕನೂ ಆದ ಶಲ್ಲೂಮನ ಹೆಂಡತಿ. ಅವಳು ಯೆರೂಸಲೇಮಿನೊಳಗೆ ಹೊಸದಾದ ನಿರ್ಮಿತ ಭಾಗದಲ್ಲಿ ವಾಸವಾಗಿದ್ದಳು.</verse>
				<verse number="15">ಹುಲ್ದಳು ಅವರಿಗೆ, “ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಇಸ್ರಾಯೇಲ್ ದೇವರಾದ ಯೆಹೋವ ದೇವರ ಮಾತುಗಳನ್ನು ತಿಳಿಸಿರಿ:</verse>
				<verse number="16">‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಯೆಹೂದದ ಅರಸನು ಓದಿದ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದರಂತೆ ಕೇಡನ್ನು ಬರಮಾಡುವೆನು.</verse>
				<verse number="17">ಏಕೆಂದರೆ ಅವರು ನನ್ನನ್ನು ಬಿಟ್ಟುಬಿಟ್ಟು, ತಮ್ಮ ಸಮಸ್ತ ಕ್ರಿಯೆಗಳಿಂದ ನನಗೆ ಕೋಪವನ್ನು ಎಬ್ಬಿಸುವಂತೆ ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದ್ದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಹೊತ್ತಿ ಉರಿಯುತ್ತಿದೆ, ಅದು ಆರಿಹೋಗುವುದಿಲ್ಲ.’</verse>
				<verse number="18">ಆದರೆ ಯೆಹೋವ ದೇವರನ್ನು ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ, ‘ನೀವು ಕೇಳಿದ ಮಾತುಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ,</verse>
				<verse number="19">ಈ ಸ್ಥಳವೂ ಅದರ ನಿವಾಸಿಗಳೂ ನಾಶಕ್ಕೂ ಶಾಪಕ್ಕೂ ಗುರಿಯಾಗುವರೆಂದು ನಾನು ಹೇಳಿದ್ದನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ ನೀನು ನಿನ್ನನ್ನು ಯೆಹೋವ ದೇವರ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ ನಾನು ನಿನ್ನ ಮೊರೆಯನ್ನು ಕೇಳಿದೆನು.</verse>
				<verse number="20">ಆದ್ದರಿಂದ ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವೆ. ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವುದಿಲ್ಲ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದಳು. ಅವರು ಹೋಗಿ ಈ ಉತ್ತರವನ್ನು ಅರಸನಿಗೆ ತಿಳಿಸಿದರು.</verse>
			</chapter>
			<chapter number="23">
				<verse number="1">ಅನಂತರ ಅರಸನಾದ ಯೋಷೀಯನು ಯೆಹೂದದ, ಯೆರೂಸಲೇಮಿನ ಹಿರಿಯರೆಲ್ಲರನ್ನು ಕರೆಕಳುಹಿಸಿ ತನ್ನ ಬಳಿಯಲ್ಲಿ ಒಟ್ಟಾಗಿ ಕೂಡಿಸಿದನು.</verse>
				<verse number="2">ಆಗ ಅರಸನೂ, ಅವನ ಸಂಗಡ ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ, ಯಾಜಕರೂ, ಪ್ರವಾದಿಗಳೂ, ಹಿರಿಕಿರಿಯರಾದ ಸಮಸ್ತ ಜನರೂ ಯೆಹೋವ ದೇವರ ಆಲಯಕ್ಕೆ ಹೋದರು. ಅರಸನು ಯೆಹೋವ ದೇವರು ಆಲಯದಲ್ಲಿ ದೊರಕಿದ ಒಡಂಬಡಿಕೆಯ ಗ್ರಂಥದ ಮಾತುಗಳನ್ನೆಲ್ಲಾ ಅವರು ಕೇಳುವಂತೆ ಓದಿದನು.</verse>
				<verse number="3">ಅರಸನು ಸ್ತಂಭದ ಬಳಿಯಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ನಿಯಮಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ಸ್ಥಿರಪಡಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು. ಜನರೆಲ್ಲರು ಹಾಗೆಯೇ ಒಡಂಬಡಿಕೆಗೆ ಒಪ್ಪಿದರು.</verse>
				<verse number="4">ಅರಸನಾದ ಯೋಷೀಯನು ಬಾಳನಿಗೋಸ್ಕರವೂ, ಅಶೇರನಿಗೋಸ್ಕರವೂ, ಆಕಾಶದ ಸೈನ್ಯಕ್ಕೋಸ್ಕರವೂ ಉಪಯೋಗಿಸುತ್ತಿದ್ದ ಸಮಸ್ತ ಸಲಕರಣೆಗಳನ್ನು ಯೆಹೋವ ದೇವರ ಆಲಯದಿಂದ ಹೊರಗೆ ತೆಗೆದುಕೊಂಡು ಬರಬೇಕೆಂದು ಮಹಾಯಾಜಕನಾದ ಹಿಲ್ಕೀಯನಿಗೂ, ಮುಖ್ಯಯಾಜಕರಿಗೂ, ದ್ವಾರಪಾಲಕರಿಗೂ ಆಜ್ಞಾಪಿಸಿದನು. ಅರಸನು ಅವುಗಳನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಕಣಿವೆಯ ಬಯಲಿನಲ್ಲಿ ಸುಡಿಸಿ, ಅವುಗಳ ಬೂದಿಯನ್ನು ಬೇತೇಲಿಗೆ ತರುವಂತೆ ಮಾಡಿದನು.</verse>
				<verse number="5">ಯೆಹೂದದ ಪಟ್ಟಣಗಳಲ್ಲಿರುವ ಉನ್ನತ ಪೂಜಾಸ್ಥಳಗಳಲ್ಲಿಯೂ, ಯೆರೂಸಲೇಮಿನ ಸುತ್ತಲಿರುವ ಉನ್ನತ ಪೂಜಾಸ್ಥಳಗಳಲ್ಲಿಯೂ ಧೂಪವನ್ನು ಸುಡಲು ಯೆಹೂದದ ಅರಸರು ನೇಮಿಸಿದ್ದ ಪೂಜಾರಿಗಳನ್ನೂ ಬಾಳನಿಗೂ, ಸೂರ್ಯನಿಗೂ, ಚಂದ್ರನಿಗೂ, ಗ್ರಹಗಳಿಗೂ, ಆಕಾಶದ ಸಮಸ್ತ ಸೈನ್ಯಕ್ಕೂ, ಧೂಪಸುಡುವವರನ್ನೂ ತೆಗೆದುಹಾಕಿದನು.</verse>
				<verse number="6">ಅವನು ಅಶೇರ ಸ್ತಂಭವನ್ನು ಯೆಹೋವ ದೇವರ ಆಲಯದೊಳಗಿಂದ ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ತರಿಸಿ, ಅದನ್ನು ಕಿದ್ರೋನ್ ಕಣಿವೆಯ ಬಳಿಯಲ್ಲಿ ಸುಟ್ಟು, ಅದನ್ನು ಧೂಳಾಗಿ ಪುಡಿಮಾಡಿ, ಆ ಧೂಳಿನ ಪುಡಿಯನ್ನು ಸಾಮಾನ್ಯ ಜನರ ಸಮಾಧಿಗಳ ಮೇಲೆ ಹಾಕಿದನು.</verse>
				<verse number="7">ಯೆಹೋವ ದೇವರ ಆಲಯದ ಬಳಿಯಲ್ಲಿದ್ದ ಅಶೇರದೇವತೆಗಾಗಿ ನೇಯ್ಗೆ ಕೆಲಸ ಮಾಡುತ್ತಿದ್ದ ಸ್ತ್ರೀಯರ ಹಾಗೂ ವೇಶ್ಯಾವೃತ್ತಿಯವರ ಮನೆಗಳನ್ನು ಕೆಡವಿಸಿದನು.</verse>
				<verse number="8">ಯೋಷೀಯನು ಯೆಹೂದದ ಪಟ್ಟಣಗಳಿಂದ ಯಾಜಕರೆಲ್ಲರನ್ನು ಬರಮಾಡಿ, ಗಿಬೆಯ ಪಟ್ಟಣದಿಂದ ಬೇರ್ಷೆಬದವರೆಗೂ, ಯಾಜಕರು ಧೂಪ ಸುಡುತ್ತಿದ್ದ ಉನ್ನತ ಪೂಜಾಸ್ಥಳಗಳನ್ನೂ ಅಶುದ್ಧ ಮಾಡಿದನು. ಅನಂತರ ಪುರಾಧಿಕಾರಿಯಾದ ಯೆಹೋಶುವನ ಬಾಗಿಲಿನ ದ್ವಾರದಲ್ಲಿದ್ದ ಬಾಗಿಲುಗಳ ಉನ್ನತ ಸ್ಥಳಗಳನ್ನು ಕೆಡವಿ ಹಾಕಿದನು.</verse>
				<verse number="9">ಆದರೆ ಉನ್ನತ ಪೂಜಾಸ್ಥಳಗಳ ಯಾಜಕರು ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಬಲಿಪೀಠದ ಬಳಿಯಲ್ಲಿ ಸೇವೆ ಮಾಡದೇ ಇದ್ದರೂ, ತಮ್ಮ ಸಹೋದರರ ಮಧ್ಯದಲ್ಲಿ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುತ್ತಾ ಇದ್ದರು.</verse>
				<verse number="10">ಯಾವನೂ ತನ್ನ ಮಗನನ್ನಾದರೂ, ಮಗಳನ್ನಾದರೂ ಮೋಲೆಕನಿಗೋಸ್ಕರ ಬೆಂಕಿಯಲ್ಲಿ ಬಲಿ ಅರ್ಪಿಸದಂತೆ ಹಿನ್ನೋಮ್ ತಗ್ಗಿನಲ್ಲಿದ್ದ ತೋಫೆತನ್ನು ಅಶುದ್ಧ ಮಾಡಿದನು.</verse>
				<verse number="11">ಯೆಹೂದದ ಅರಸರು ಸೂರ್ಯನಿಗೆ ಪ್ರತಿಷ್ಠೆಪಡಿಸಿದ್ದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಯೋಷೀಯನು ಸುಟ್ಟುಹಾಕಿದನು. ಅವು ಯೆಹೋವ ದೇವರ ಆಲಯದ ದ್ವಾರದಲ್ಲಿ ಪ್ರಧಾನನಾದ ನಾತಾನ್ ಮೆಲೆಕನ ಕೊಠಡಿಯ ಹತ್ತಿರ ಇದ್ದವು. ಅರಸರು ಸೂರ್ಯನಿಗೆ ಸಮರ್ಪಿಸಿ ನಿಲ್ಲಿಸಿದ್ದ ರಥಗಳನ್ನು ಸಹ ಸುಟ್ಟುಬಿಟ್ಟನು.</verse>
				<verse number="12">ಯೆಹೂದದ ಅರಸರು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ, ಮನಸ್ಸೆಯು ಯೆಹೋವ ದೇವರ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠಗಳನ್ನೂ ಅರಸನು ಕೆಡವಿಸಿ, ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಕಣಿವೆಯಲ್ಲಿ ಹಾಕಿಸಿಬಿಟ್ಟನು.</verse>
				<verse number="13">ಇದಲ್ಲದೆ ಯೆರೂಸಲೇಮಿನ ಮುಂದೆ ವಿಘ್ನ ಬೆಟ್ಟದ ದಕ್ಷಿಣದಲ್ಲಿದ್ದ ಸೀದೋನ್ಯರ ಅಸಹ್ಯಕರವಾದ ಅಷ್ಟೋರೆತಿಗೂ, ಮೋವಾಬ್ಯರ ಅಸಹ್ಯಕರವಾದ ಕೆಮೋಷನಿಗೂ, ಅಮ್ಮೋನ್ಯರ ಅಸಹ್ಯಕರವಾದ ಮಿಲ್ಕೋಮನಿಗೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕಟ್ಟಿಸಿದ ಉನ್ನತ ಪೂಜಾಸ್ಥಳಗಳನ್ನೂ ಯೋಷೀಯನು ಅಶುದ್ಧ ಮಾಡಿದನು.</verse>
				<verse number="14">ಇದಲ್ಲದೆ ಯೋಷೀಯನು ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದುಬಿಟ್ಟು, ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.</verse>
				<verse number="15">ಇದಲ್ಲದೆ ಬೇತೇಲಿನಲ್ಲಿ ಇದ್ದ ಬಲಿಪೀಠವನ್ನೂ, ಇಸ್ರಾಯೇಲನ್ನು ಪಾಪಮಾಡಲು ಪ್ರೇರೇಪಿಸಿದ ನೆಬಾಟನ ಮಗ ಯಾರೊಬ್ಬಾಮನು ಮಾಡಿದ ಉನ್ನತ ಪೂಜಾಸ್ಥಳವನ್ನೂ ಸುಟ್ಟುಬಿಟ್ಟು, ಅದನ್ನು ಧೂಳಾಗಲು ಪುಡಿಮಾಡಿ ಅಶೇರ ಸ್ತಂಭವನ್ನು ಸುಟ್ಟುಬಿಟ್ಟನು.</verse>
				<verse number="16">ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು, ದೇವರ ಮನುಷ್ಯನು ಹೇಳಿದ ಈ ಮಾತುಗಳನ್ನು ಯೆಹೋವ ದೇವರ ವಾಕ್ಯದ ಪ್ರಕಾರ, ಬಲಿಪೀಠದ ಮೇಲೆ ಅವುಗಳನ್ನು ಸುಟ್ಟು ಅದನ್ನು ಅಶುದ್ಧ ಮಾಡಿದನು.</verse>
				<verse number="17">ಆಗ ಅರಸನು, “ನಾನು ಕಾಣುವ ಈ ಸಮಾಧಿ ಕಲ್ಲು ಯಾರದು?” ಎಂದು ಕೇಳಿದನು. ಅದಕ್ಕೆ ಆ ಊರಿನವರು ಅವನಿಗೆ, “ನೀನು ಈಗ ಬೇತೇಲಿನ ಬಲಿಪೀಠಕ್ಕೆ ಮಾಡಿದ್ದನ್ನು ಮುಂತಿಳಿಸಿದ ಯೆಹೂದದ ದೇವರ ಮನುಷ್ಯನ ಸಮಾಧಿ,” ಎಂದರು.</verse>
				<verse number="18">“ಅದನ್ನು ಬಿಟ್ಟುಬಿಡಿರಿ. ಯಾವನೂ ಅವನ ಎಲುಬುಗಳನ್ನು ಮುಟ್ಟದೆ ಇರಲಿ,” ಎಂದನು. ಹಾಗೆಯೇ ಅವನು ಅವರ ಎಲುಬುಗಳನ್ನು ಸಮಾರ್ಯದಿಂದ ಬಂದ ಪ್ರವಾದಿಯ ಎಲುಬುಗಳ ಸಂಗಡ ಬಿಟ್ಟುಬಿಟ್ಟರು.</verse>
				<verse number="19">ಇಸ್ರಾಯೇಲಿನ ಅರಸರು ಸಮಾರ್ಯದ ಪಟ್ಟಣಗಳಲ್ಲಿ ಮಾಡಿದ ಯೆಹೋವ ದೇವರ ಕೋಪಕ್ಕೆ ಕಾರಣವಾಗಿದ್ದ ಉನ್ನತ ಪೂಜಾಸ್ಥಳಗಳನ್ನು ಯೋಷೀಯನು ಕೆಡವಿಹಾಕಿ, ಬೇತೇಲಿನಲ್ಲಿ ತಾನು ಮಾಡಿದಂತೆ ಅವುಗಳಿಗೆ ಮಾಡಿದನು.</verse>
				<verse number="20">ಅಲ್ಲಿದ್ದ ಉನ್ನತ ಪೂಜಾಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು, ಯೋಷೀಯನು ಯೆರೂಸಲೇಮಿಗೆ ತಿರುಗಿಬಂದನು.</verse>
				<verse number="21">ಅರಸನಾದ ಯೋಷೀಯನು ಸಮಸ್ತ ಜನರಿಗೂ, “ಈ ಒಡಂಬಡಿಕೆಯ ಗ್ರಂಥದಲ್ಲಿ ಬರೆದಿರುವ ಹಾಗೆಯೇ ನಿಮ್ಮ ದೇವರಾದ ಯೆಹೋವ ದೇವರ ಪಸ್ಕಹಬ್ಬವನ್ನು ಆಚರಿಸಿರಿ,” ಎಂದು ಆಜ್ಞಾಪಿಸಿದನು.</verse>
				<verse number="22">ನಿಶ್ಚಯವಾಗಿ ಇಸ್ರಾಯೇಲಿಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳ ದಿವಸಗಳು ಮೊದಲುಗೊಂಡು, ಇಸ್ರಾಯೇಲಿನ ಯೆಹೂದದ ಅರಸರ ಸಕಲ ದಿವಸಗಳಲ್ಲಿಯೂ ಇಂಥಾ ಪಸ್ಕವನ್ನು ಆಚರಿಸಿರಲಿಲ್ಲ.</verse>
				<verse number="23">ಅರಸನಾದ ಯೋಷೀಯನ ಹದಿನೆಂಟನೆಯ ವರ್ಷದಲ್ಲಿ ಈ ಪಸ್ಕಹಬ್ಬವನ್ನು ಯೆರೂಸಲೇಮಿನಲ್ಲಿ ಯೆಹೋವ ದೇವರಿಗೆ ಆಚರಿಸಲಾಯಿತು.</verse>
				<verse number="24">ಇದಲ್ಲದೆ ಯಾಜಕನಾದ ಹಿಲ್ಕೀಯನು ಯೆಹೋವ ದೇವರ ಆಲಯದಲ್ಲಿ ಕಂಡುಕೊಂಡ ಗ್ರಂಥದಲ್ಲಿ ಬರೆದಿದ್ದ ನಿಯಮದ ಮಾತುಗಳನ್ನು ಯೋಷೀಯನು ಈಡೇರಿಸುವಂತೆ ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನಲ್ಲಿಯೂ ಭೂತಪ್ರೇತಗಳನ್ನು ವಿಚಾರಿಸುವವರನ್ನೂ, ಮಂತ್ರಗಾರರನ್ನೂ, ಮನೆದೇವರುಗಳನ್ನೂ, ವಿಗ್ರಹಗಳನ್ನೂ, ಸಮಸ್ತ ಅಸಹ್ಯಕರವಾದವುಗಳನ್ನೂ ತೆಗೆದುಹಾಕಿಬಿಟ್ಟನು.</verse>
				<verse number="25">ತನ್ನ ಪೂರ್ಣಹೃದಯದಿಂದಲೂ, ತನ್ನ ಪೂರ್ಣಪ್ರಾಣದಿಂದಲೂ, ತನ್ನ ಪೂರ್ಣ ಬಲದಿಂದಲೂ ಮೋಶೆಯ ಸಮಸ್ತ ನಿಯಮದ ಪ್ರಕಾರ ಯೆಹೋವ ದೇವರ ಕಡೆಗೆ ತಿರುಗಿಕೊಂಡ ಯೋಷೀಯ ಅರಸನಿಗೆ ಸಮಾನನಾದ ಅರಸನು ಹಿಂದೆಯೂ ಅನಂತರವೂ ಇರಲಿಲ್ಲ.</verse>
				<verse number="26">ಆದರೂ ಮನಸ್ಸೆಯು ಮಾಡಿದ ದುಷ್ಕೃತ್ಯಗಳ ನಿಮಿತ್ತ ಯೆಹೂದ್ಯರ ಮೇಲೆ ಯೆಹೋವ ದೇವರ ಕೋಪವು ಇನ್ನೂ ನೆಲೆಯಾಗಿತ್ತು.</verse>
				<verse number="27">ಯೆಹೋವ ದೇವರು, “ನಾನು ಇಸ್ರಾಯೇಲನ್ನು ತೆಗೆದುಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು. ಇದಲ್ಲದೆ ನಾನು ಆಯ್ದುಕೊಂಡ ಯೆರೂಸಲೇಮ್ ಪಟ್ಟಣವನ್ನೂ, ‘ನನ್ನ ಹೆಸರು ಅಲ್ಲಿರುವುದು,’ ಎಂದು ನಾನು ಹೇಳಿದ ಆಲಯವನ್ನೂ ತೆಗೆದುಬಿಡುವೆನು,” ಎಂದು ಹೇಳಿದರು.</verse>
				<verse number="28">ಯೋಷೀಯನ ಇತರ ಕ್ರಿಯೆಗಳೂ ಅವನು ಮಾಡಿದ ಸಮಸ್ತವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="29">ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ಸಹಾಯಮಾಡಲು ಯೂಫ್ರೇಟೀಸ್ ನದಿಯವರೆಗೆ ಹೋದನು. ಅರಸನಾದ ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದಾಗ, ನೆಕೋ ಅವನನ್ನು ಎದುರಿಸಿ ಮೆಗಿದ್ದೋವಿನಲ್ಲಿ ಕೊಂದುಹಾಕಿದನು.</verse>
				<verse number="30">ಯೋಷೀಯನ ಸೇವಕರು ಅವನ ಶವವನ್ನು ಮೆಗಿದ್ದೋವಿನಿಂದ ಯೆರೂಸಲೇಮಿಗೆ ರಥದಲ್ಲಿ ತೆಗೆದುಕೊಂಡು ಬಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ಅಭಿಷೇಕಿಸಿ, ಅವನ ತಂದೆಗೆ ಬದಲಾಗಿ ಅವನನ್ನು ಅರಸನನ್ನಾಗಿ ಮಾಡಿದರು.</verse>
				<verse number="31">ಯೆಹೋವಾಹಾಜನು ಅರಸನಾದಾಗ ಇಪ್ಪತ್ತಮೂರು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿ ಲಿಬ್ನ ಊರಿನ ಯೆರೆಮೀಯನ ಮಗಳಾದ ಹಮೂಟಲ್.</verse>
				<verse number="32">ಯೆಹೋವಾಹಾಜನು ತನ್ನ ಪೂರ್ವಿಕರಂತೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.</verse>
				<verse number="33">ಆದರೆ ಫರೋಹ ನೆಕೋವನು ಇವನನ್ನು ಯೆರೂಸಲೇಮಿನಲ್ಲಿ ಆಳದ ಹಾಗೆ ಹಮಾತ್ ದೇಶದ ರಿಬ್ಲಾ ಎಂಬ ಊರಲ್ಲಿ ಬಂಧಿಸಿಟ್ಟನು. ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ, ಮೂವತ್ತ ನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರಬೇಕಾಯಿತು.</verse>
				<verse number="34">ಫರೋಹ ನೆಕೋವನು ಯೋಷೀಯನಿಗೆ ಬದಲಾಗಿ ಅವನ ಮಗನಾದ ಎಲ್ಯಾಕೀಮನನ್ನು ಅರಸನನ್ನಾಗಿ ಮಾಡಿ, ಅವನಿಗೆ ಯೆಹೋಯಾಕೀಮನೆಂಬ ಹೆಸರನ್ನಿಟ್ಟನು. ಯೆಹೋವಾಹಾಜನನ್ನು ತೆಗೆದುಕೊಂಡು ಈಜಿಪ್ಟಿಗೆ ಒಯ್ದನು. ಯೆಹೋವಾಹಾಜನು ಅಲ್ಲೇ ಮರಣಹೊಂದಿದನು.</verse>
				<verse number="35">ಯೆಹೋಯಾಕೀಮನು ಬೆಳ್ಳಿಯನ್ನೂ, ಬಂಗಾರವನ್ನೂ ಫರೋಹನಿಗೆ ಕೊಟ್ಟನು. ಅವನು ಬೆಳ್ಳಿಯನ್ನೂ, ಬಂಗಾರವನ್ನೂ ನೆಕೋ ಫರೋಹನಿಗೆ ಕೊಡಲು ದೇಶದ ಜನರಿಂದ ಪ್ರತಿಯೊಬ್ಬರ ತೆರಿಗೆಯನ್ನು ಬಲವಂತವಾಗಿ ತೆಗೆದುಕೊಂಡನು.</verse>
				<verse number="36">ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ರೂಮಾ ಊರಿನವಳೂ ಪೆದಾಯನ ಮಗಳೂ ಆದ ಜೆಬೂದಾ.</verse>
				<verse number="37">ಅವನು ತನ್ನ ಪೂರ್ವಿಕರಂತೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.</verse>
			</chapter>
			<chapter number="24">
				<verse number="1">ಯೆಹೋಯಾಕೀಮನ ಆಳಿಕೆಯಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದೇಶವನ್ನು ದಾಳಿಮಾಡಿದನು. ಯೆಹೋಯಾಕೀಮನು ಮೂರು ವರ್ಷ ಅವನ ಸೇವಕನಾಗಿದ್ದು, ತರುವಾಯ ಅವನ ಮೇಲೆ ತಿರುಗಿಬಿದ್ದನು.</verse>
				<verse number="2">ಯೆಹೋವ ದೇವರು ಬಾಬಿಲೋನಿಯರನ್ನೂ, ಅರಾಮ್ಯರನ್ನೂ, ಮೋವಾಬ್ಯರನ್ನೂ, ಅಮ್ಮೋನಿಯರನ್ನೂ ಅವನ ಮೇಲೆ ಕಳುಹಿಸಿದನು. ಯೆಹೋವ ದೇವರು ಪ್ರವಾದಿಗಳಾದ ತನ್ನ ಸೇವಕರ ಮುಖಾಂತರ ಹೇಳಿದ ಮಾತಿನ ಪ್ರಕಾರ, ಯೆಹೂದವನ್ನು ನಾಶಮಾಡುವಂತೆ ಅದರ ಮೇಲೆ ಅವರನ್ನು ಬರಮಾಡಿದನು.</verse>
				<verse number="3">ನಿಶ್ಚಯವಾಗಿ ಯೆಹೋವ ದೇವರ ಅಪ್ಪಣೆಯಿಂದ ಇದು ಯೆಹೂದದ ಮೇಲೆ ಆಯಿತು. ಮನಸ್ಸೆಯು ತನ್ನ ಸಮಸ್ತ ಕೃತ್ಯಗಳಿಂದ ಮಾಡಿದ ಪಾಪಗಳ ನಿಮಿತ್ತ, ಯೆಹೂದವನ್ನು ದೇವರು ತಮ್ಮ ಸಮ್ಮುಖದಿಂದ ತೆಗೆದುಹಾಕುವಂತೆ ಇದಾಯಿತು.</verse>
				<verse number="4">ಇದಲ್ಲದೆ ಮನಸ್ಸೆಯು ಚೆಲ್ಲಿದ ನಿರಪರಾಧದ ರಕ್ತದ ನಿಮಿತ್ತ ಇದಾಯಿತು. ಅವನು ನಿರಪರಾಧದ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ್ದನು. ಯೆಹೋವ ದೇವರು ಅದನ್ನು ಕ್ಷಮಿಸಲು ಸಿದ್ಧವಾಗಿರಲಿಲ್ಲ.</verse>
				<verse number="5">ಯೆಹೋಯಾಕೀಮನ ಇತರ ಕ್ರಿಯೆಗಳೂ, ಅವನು ಮಾಡಿದ ಸಮಸ್ತವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="6">ಯೆಹೋಯಾಕೀಮನು ಮೃತನಾಗಿ ತನ್ನ ಪಿತೃಗಳ ಸಂಗಡ ಸೇರಿದನು. ಅವನಿಗೆ ಬದಲಾಗಿ ಅವನ ಮಗ ಯೆಹೋಯಾಖೀನನು ಅರಸನಾದನು.</verse>
				<verse number="7">ಆದರೆ ಈಜಿಪ್ಟಿನ ಅರಸನು ತನ್ನ ದೇಶದಿಂದ ತಿರುಗಿ ಬರಲಿಲ್ಲ. ಏಕೆಂದರೆ ಈಜಿಪ್ಟ್ ನದಿ ಮೊದಲುಗೊಂಡು ಯೂಫ್ರೇಟೀಸ್ ನದಿಯವರೆಗೂ ಈಜಿಪ್ಟಿನ ಅರಸನಿಗೆ ಇದ್ದದ್ದನ್ನೆಲ್ಲಾ ಬಾಬಿಲೋನಿನ ಅರಸನು ಸ್ವಾಧೀನಮಾಡಿಕೊಂಡಿದ್ದನು.</verse>
				<verse number="8">ಯೆಹೋಯಾಖೀನನು ಅರಸನಾದಾಗ ಹದಿನೆಂಟು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಅವನ ತಾಯಿಯು ಯೆರೂಸಲೇಮಿನ ಎಲ್ನಾತಾನನ ಮಗಳಾದ ನೆಹುಷ್ಟಾ.</verse>
				<verse number="9">ಅವನು ತನ್ನ ತಂದೆಯು ಮಾಡಿದಂತೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದನು.</verse>
				<verse number="10">ಆ ಕಾಲದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಯೆರೂಸಲೇಮಿಗೆ ವಿರೋಧವಾಗಿ ಬಂದು ಆ ಪಟ್ಟಣಕ್ಕೆ ಮುತ್ತಿಗೆ ಹಾಕಿದರು.</verse>
				<verse number="11">ಅಷ್ಟರಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತಾನೇ ಆ ಪಟ್ಟಣಕ್ಕೆ ಬಂದನು.</verse>
				<verse number="12">ಆಗ ಯೆಹೂದದ ಅರಸನಾದ ಯೆಹೋಯಾಖೀನನೂ, ಅವನ ತಾಯಿಯೂ, ಅವನ ಸೇವಕರೂ, ಅವನ ಪ್ರಧಾನರೂ, ಅವನ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಶರಣಾದರು. ಬಾಬಿಲೋನಿನ ಅರಸನು ತನ್ನ ಆಳಿಕೆಯ ಎಂಟನೆಯ ವರ್ಷದಲ್ಲಿ ಯೆಹೋಯಾಕೀನನನ್ನು ಸೆರೆಹಿಡಿದನು.</verse>
				<verse number="13">ಯೆಹೋವ ದೇವರು ಮುಂತಿಳಿಸಿದ ಪ್ರಕಾರವೇ ನೆಬೂಕದ್ನೆಚ್ಚರನು ಯೆಹೋವ ದೇವರ ಆಲಯದಲ್ಲಿ ಸಮಸ್ತ ಬೊಕ್ಕಸಗಳನ್ನೂ, ಅರಮನೆಯ ಬೊಕ್ಕಸಗಳನ್ನೂ, ಇಸ್ರಾಯೇಲಿನ ಅರಸನಾದ ಸೊಲೊಮೋನನು ಅರಸನ ಆಲಯದಲ್ಲಿ ಮಾಡಿದ ಬಂಗಾರದ ಸಮಸ್ತ ಪಾತ್ರೆಗಳನ್ನೂ ಸೂರೆಯಾಗಿ ತೆಗೆದುಕೊಂಡನು.</verse>
				<verse number="14">ಅವನು ಯೆರೂಸಲೇಮಿನವರೆಲ್ಲರನ್ನೂ, ಸಮಸ್ತ ಪ್ರಧಾನರನ್ನೂ, ಸಮಸ್ತ ಸ್ಥಿತಿಯುಳ್ಳ ಪರಾಕ್ರಮಶಾಲಿಗಳನ್ನೂ, ಹತ್ತು ಸಾವಿರ ಸೆರೆಯವರನ್ನೂ ಮತ್ತು ಸಮಸ್ತ ಕೌಶಲಗಾರರನ್ನೂ, ಕಮ್ಮಾರರನ್ನೂ ಅಲ್ಲಿಂದ ಒಯ್ದನು. ದೇಶದಲ್ಲಿ ಬಡವರು ಹೊರತು ಉಳಿದವರು ಯಾರೂ ಇರಲಿಲ್ಲ.</verse>
				<verse number="15">ನೆಬೂಕದ್ನೆಚ್ಚರನು ಯೆಹೋಯಾಖೀನನನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದನು. ಅರಸನ ತಾಯಿಯನ್ನೂ, ಅರಸನ ಹೆಂಡತಿಯರನ್ನೂ, ಅವನ ಅಧಿಕಾರಿಗಳನ್ನೂ, ದೇಶದ ಪ್ರತಿಷ್ಠಿತರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಯಾಗಿ ಒಯ್ದನು.</verse>
				<verse number="16">ಬಾಬಿಲೋನಿನ ಅರಸನು ಸಮಸ್ತ ಸ್ಥಿತಿವಂತರಾದ ಏಳು ಸಾವಿರ ಸೈನಿಕರನ್ನೂ, ಕೌಶಲಗಾರರನ್ನೂ ಮತ್ತು ಕಮ್ಮಾರರೂ ಆದ ಸಾವಿರ ಜನರನ್ನೂ ಬಾಬಿಲೋನಿಗೆ ಸೆರೆಯಾಗಿ ಒಯ್ದನು.</verse>
				<verse number="17">ಬಾಬಿಲೋನಿನ ಅರಸನು ಯೆಹೋಯಾಖೀನನ ಚಿಕ್ಕಪ್ಪನಾದ ಮತ್ತನ್ಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿ, ಅವನಿಗೆ ಚಿದ್ಕೀಯನೆಂದು ಬೇರೆ ಹೆಸರನ್ನಿಟ್ಟನು.</verse>
				<verse number="18">ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್.</verse>
				<verse number="19">ಅವನು ಯೆಹೋಯಾಕೀಮನು ಮಾಡಿದಂತೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.</verse>
				<verse number="20">ಯೆಹೋವ ದೇವರ ಕೋಪದಿಂದ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಇವೆಲ್ಲ ಉಂಟಾದವು. ಹೀಗೆ ಯೆಹೋವ ದೇವರು ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಟ್ಟರು. ಅನಂತರ ಚಿದ್ಕೀಯನು ಬಾಬಿಲೋನಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.</verse>
			</chapter>
			<chapter number="25">
				<verse number="1">ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯ ಸಮೇತ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿಸಿದನು.</verse>
				<verse number="2">ಅರಸನಾದ ಚಿದ್ಕೀಯನ ಹನ್ನೊಂದನೆಯ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆಹಾಕಿದನು.</verse>
				<verse number="3">ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣದಲ್ಲಿ ಕ್ಷಾಮವು ಬಲವಾದದ್ದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.</verse>
				<verse number="4">ಆಗ ಪಟ್ಟಣದ ಗೋಡೆ ಮುರಿಯಲಾಯಿತು. ಸೈನಿಕರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನ ಮಾರ್ಗವಾಗಿ ಹೊರಟು, ಬಾಬಿಲೋನಿನವರು ಪಟ್ಟಣದ ಬಳಿಯಲ್ಲಿ ಇದ್ದದ್ದರಿಂದ ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.</verse>
				<verse number="5">ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಅವನನ್ನು ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.</verse>
				<verse number="6">ಅವರು ಅರಸನನ್ನು ಹಿಡಿದುಕೊಂಡರು. ರಿಬ್ಲದಲ್ಲಿರುವ ಬಾಬಿಲೋನಿನ ಅರಸನ ಬಳಿಗೆ ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.</verse>
				<verse number="7">ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದರು. ತರುವಾಯ ಅವನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ ಅವನನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.</verse>
				<verse number="8">ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದ ಐದನೆಯ ತಿಂಗಳಿನ, ಏಳನೆಯ ದಿನದಲ್ಲಿ ಬಾಬಿಲೋನಿನ ಅರಸನ ಸೇವಕನೂ, ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದು,</verse>
				<verse number="9">ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ, ಯೆರೂಸಲೇಮಿನಲ್ಲಿರುವ ಸಮಸ್ತ ಮನೆಗಳನ್ನೂ, ಪ್ರತಿ ದೊಡ್ಡಮನುಷ್ಯರ ಮನೆಗಳನ್ನೂ ಬೆಂಕಿಯಿಂದ ಸುಟ್ಟುಬಿಟ್ಟನು.</verse>
				<verse number="10">ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಬಾಬಿಲೋನಿಯರ ಸೈನ್ಯದವರೆಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆಗಳನ್ನು ಕೆಡವಿಬಿಟ್ಟರು.</verse>
				<verse number="11">ಕಾವಲಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದ ಜನರನ್ನೂ, ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನೂ, ಬೇರೆ ಎಲ್ಲಾ ಜನರನ್ನೂ ಸೆರೆಯಾಗಿ ಒಯ್ದನು.</verse>
				<verse number="12">ಆದರೆ ಕಾವಲಿನ ಅಧಿಪತಿಯು ಹೊಲಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಬೇಸಾಯ ಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.</verse>
				<verse number="13">ಯೆಹೋವ ದೇವರ ಆಲಯದಲ್ಲಿದ್ದ ಕಂಚಿನ ಸ್ತಂಭಗಳನ್ನೂ, ಪೀಠಗಳನ್ನೂ, ಕಂಚಿನ ಸಮುದ್ರವೆಂಬ ಪಾತ್ರೆಯನ್ನೂ ಬಾಬಿಲೋನಿಯರು ಒಡೆದುಹಾಕಿ, ಅದರ ಕಂಚನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.</verse>
				<verse number="14">ಇದಲ್ಲದೆ ಅವರು ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು ಮತ್ತು ಸಮಸ್ತ ಕಂಚಿನ ಸಲಕರಣೆಗಳನ್ನೂ ತೆಗೆದುಕೊಂಡು ಹೋದರು.</verse>
				<verse number="15">ಕಾವಲುಗಾರರ ಅಧಿಪತಿಯು ಅಗ್ನಿ ಪಾತ್ರೆಗಳನ್ನೂ, ತಟ್ಟೆಗಳನ್ನೂ, ಬಂಗಾರ ಬೆಳ್ಳಿಗಳಿಂದ ಮಾಡಿದ ಎಲ್ಲವನ್ನೂ ತೆಗೆದುಕೊಂಡನು.</verse>
				<verse number="16">ಸೊಲೊಮೋನನು ಯೆಹೋವ ದೇವರ ಆಲಯಕ್ಕಾಗಿ ಮಾಡಿಸಿದ್ದ ಎರಡು ಕಂಬಗಳು, ಕಂಚಿನ ಸಮುದ್ರವೆಂಬ ಪಾತ್ರೆ, ಚಕ್ರದ ಬಂಡಿಗಳು, ಇವುಗಳನ್ನು ಮಾಡುವುದಕ್ಕೆ ತೂಕ ಮಾಡಲಾರದಷ್ಟು ಕಂಚು ಹಿಡಿದಿತ್ತು.</verse>
				<verse number="17">ಪ್ರತಿಯೊಂದು ಕಂಬ ಎಂಟು ಮೀಟರ್ ಎತ್ತರವಿತ್ತು. ಪ್ರತಿಯೊಂದರ ಮೇಲೆ ಸುಮಾರು ಒಂದೂವರೆ ಮೀಟರ್ ಎತ್ತರವಾದ ಒಂದು ಕಂಚಿನ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ಕಂಚಿನ ಜಾಲರಿ ಹಾಗೂ ದಾಳಿಂಬೆ ಹಣ್ಣುಗಳು ಇದ್ದವು.</verse>
				<verse number="18">ಕಾವಲುಗಾರರ ಅಧಿಪತಿಯು ಮುಖ್ಯಯಾಜಕನಾದ ಸೆರಾಯನನ್ನೂ, ಎರಡನೆಯ ಯಾಜಕನಾದ ಚೆಫನ್ಯನನ್ನೂ, ಮೂವರು ದ್ವಾರಪಾಲಕರನ್ನೂ ಹಿಡಿದುಕೊಂಡು ಹೋದನು.</verse>
				<verse number="19">ಇದಲ್ಲದೆ ಪಟ್ಟಣದೊಳಗಿಂದ ಸೈನಿಕರ ಮೇಲಿದ್ದ ಒಬ್ಬ ಅಧಿಕಾರಿಯನ್ನೂ, ಅರಸನ ಐದು ಮಂದಿ ಸಲಹೆಗಾರರನ್ನೂ, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಮಾಡುವ ಸೇನಾಧಿಪತಿಯ ಲೇಖಕನನ್ನೂ, ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶದ ಜನರಲ್ಲಿ ಅರವತ್ತು ಮಂದಿಯನ್ನೂ ತೆಗೆದುಕೊಂಡನು.</verse>
				<verse number="20">ಇವರನ್ನೆಲ್ಲಾ ಕಾವಲಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋಗಿ, ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು.</verse>
				<verse number="21">ಬಾಬಿಲೋನಿನ ಅರಸನು ಹಮಾತಿನ ರಿಬ್ಲದಲ್ಲಿ ಅವರನ್ನು ಕೊಂದುಹಾಕಿಸಿದನು. ಈ ಪ್ರಕಾರ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.</verse>
				<verse number="22">ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ, ಶಾಫಾನನ ಮೊಮ್ಮಗನೂ, ಅಹೀಕಾಮನ ಮಗನೂ ಆದ ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿದನು.</verse>
				<verse number="23">ಆದರೆ ಬಾಬಿಲೋನಿನ ಅರಸನು ಗೆದಲ್ಯನನ್ನು ರಾಜ್ಯಪಾಲನಾಗಿ ಮಾಡಿದ್ದಾನೆಂಬ ಸುದ್ದಿಯನ್ನು ಕೇಳಿದ ಮೇಲೆ, ಉಳಿದಿದ್ದ ಯೆಹೂದ ಸೇನಾಧಿಪತಿಗಳೂ ಅವರ ಜನರೂ, ನೆತನ್ಯನ ಮಗ ಇಷ್ಮಾಯೇಲನೂ, ಕಾರೇಹನ ಮಗ ಯೋಹಾನಾನ್, ನೆಟೋಫದವನಾದ ತನ್ಹುಮೆತನ ಮಗ ಸೆರಾಯ್, ಮಾಕಾತ್ಯರಲ್ಲಿ ಒಬ್ಬನ ಮಗ ಯಾಜನ್ಯ, ಇವರೆಲ್ಲರೂ ತಮ್ಮ ಜನರಸಹಿತವಾಗಿ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.</verse>
				<verse number="24">ಆಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “ಬಾಬಿಲೋನಿಯದ ಸೈನಿಕರಿಗೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,” ಎಂದನು.</verse>
				<verse number="25">ಆದರೆ ಏಳನೆಯ ತಿಂಗಳಲ್ಲಿ ಅರಸನ ಸಂತಾನದವನೂ, ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಅವನ ಸಂಗಡ ಹತ್ತು ಮಂದಿಯೂ ಬಂದು ಗೆದಲ್ಯನನ್ನೂ, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ, ಬಾಬಿಲೋನಿಯರನ್ನೂ ಕೊಂದುಹಾಕಿದರು.</verse>
				<verse number="26">ಆಗ ಹಿರಿಕಿರಿಯರಾದ ಸಮಸ್ತ ಜನರೂ, ದಂಡುಗಳ ಅಧಿಪತಿಗಳೂ ಬಾಬಿಲೋನಿಯದವರಿಗೆ ಹೆದರಿ ಎದ್ದು ಈಜಿಪ್ಟಿಗೆ ಹೋದರು.</verse>
				<verse number="27">ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿವಸದಲ್ಲಿ, ಬಾಬಿಲೋನಿನ ಅರಸನಾದ ಎವೀಲ್ಮೆರೋದಕನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಅವನು ಯೆಹೂದದ ಅರಸನಾದ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿದನು.</verse>
				<verse number="28">ಇದಲ್ಲದೆ ಅವನ ಸಂಗಡ ಪ್ರೀತಿಯಿಂದ ಮಾತನಾಡಿ, ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸರಿಗಿಂತ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.</verse>
				<verse number="29">ಅವನ ಸೆರೆಯ ವಸ್ತ್ರಗಳನ್ನು ತೆಗೆದು ರಾಜವಸ್ತ್ರ ತೊಡಿಸಿದನು. ಹೀಗೆ ಯೆಹೋಯಾಖೀನನು ಬದುಕಿದ ಸಕಲ ದಿವಸಗಳಲ್ಲಿ ಅರಸನ ಪಂಕ್ತಿಯಲ್ಲಿಯೇ ಊಟಮಾಡುತ್ತಿದ್ದನು.</verse>
				<verse number="30">ಅವನು ಬದುಕಿರುವವರೆಗೂ ಅವನಿಗೆ ಬೇಕಾಗಿದ್ದ ಎಲ್ಲಾ ಪದಾರ್ಥಗಳು ಬಾಬಿಲೋನಿನ ಅರಸನಿಂದಲೇ ಪ್ರತಿನಿತ್ಯವೂ ದೊರಕುತ್ತಿದ್ದವು.</verse>
			</chapter>
		</book>
		<book number="13">
			<chapter number="1">
				<verse number="1">ಆದಾಮ, ಸೇತ್, ಎನೋಷ್,</verse>
				<verse number="2">ಕೇನಾನ್, ಮಹಲಲೇಲ್ ಯೆರೆದ್,</verse>
				<verse number="3">ಹನೋಕ್, ಮೆತೂಷೆಲಹ, ಲೆಮೆಕ್, ನೋಹ.</verse>
				<verse number="4">ನೋಹನ ಮಕ್ಕಳು: ಶೇಮ್, ಹಾಮ್, ಯೆಫೆತ್.</verse>
				<verse number="5">ಯೆಫೆತನ ಪುತ್ರರು: ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್.</verse>
				<verse number="6">ಗೋಮೆರನ ಪುತ್ರರು: ಅಷ್ಕೆನಜ್, ರೀಫತ್, ತೋಗರ್ಮ.</verse>
				<verse number="7">ಯಾವಾನನ ಮಕ್ಕಳು: ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾನೀಮ್.</verse>
				<verse number="8">ಹಾಮನ ಪುತ್ರರು: ಕೂಷ್, ಈಜಿಪ್ಟ್, ಪೂಟ್, ಕಾನಾನ್.</verse>
				<verse number="9">ಕೂಷನ ಪುತ್ರರು: ಸೆಬ, ಹವೀಲ, ಸಬ್ತಾ, ರಾಮ, ಸಬ್ತೆಕ. ರಾಮನ ಪುತ್ರರು: ಶೆಬಾ ಮತ್ತು ದೆದಾನ್.</verse>
				<verse number="10">ಕೂಷನು ನಿಮ್ರೋದನ ತಂದೆಯಾಗಿದ್ದನು, ಇವನು ಭೂಮಿಯ ಮೇಲೆ ಬಲಿಷ್ಠ ಯುದ್ಧವೀರನಾದನು.</verse>
				<verse number="11">ಈಜಿಪ್ಟನವರಿಂದ, ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು,</verse>
				<verse number="12">ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಹುಟ್ಟಿದರು. ಕಸ್ಲುಹ್ಯರಿಂದ ಫಿಲಿಷ್ಟಿಯರು ಬಂದವರು.</verse>
				<verse number="13">ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್, ಆಮೇಲೆ ಹೇತನು ಹುಟ್ಟಿದನು.</verse>
				<verse number="14">ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು,</verse>
				<verse number="15">ಹಿವ್ವಿಯರು, ಅರ್ಕಿಯರು, ಸೀನಿಯರು,</verse>
				<verse number="16">ಅರ್ವಾದಿಯರು, ಚೆಮಾರಿಯರು, ಹಮಾತಿಯರು, ಕಾನಾನನಿಂದ ಹುಟ್ಟಿದರು.</verse>
				<verse number="17">ಶೇಮನ ಪುತ್ರರು: ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್, ಅರಾಮ್, ಅರಾಮನ ಪುತ್ರರು: ಊಚ್, ಹೂಲ್, ಗೆತೆರ್ ಮತ್ತು ಮೆಷೆಕ್.</verse>
				<verse number="18">ಅರ್ಪಕ್ಷದ್ ಶೆಲಹನ ತಂದೆ; ಶೆಲಹ ಏಬೆರನ ತಂದೆ.</verse>
				<verse number="19">ಏಬೆರನಿಗೆ ಇಬ್ಬರು ಪುತ್ರರು ಹುಟ್ಟಿದರು. ಒಬ್ಬನಿಗೆ ಪೆಲೆಗ್ ಎಂದು ಹೆಸರಿಡಲಾಯಿತು, ಅವನ ಕಾಲದಲ್ಲಿ ಲೋಕದಲ್ಲಿಯ ಜನರು ವಿಭಾಗವಾದದ್ದರಿಂದ ಈ ಹೆಸರು ಅವನಿಗೆ ಬಂದಿತು. ಅವನ ತಮ್ಮನ ಹೆಸರು ಯೊಕ್ತಾನ್.</verse>
				<verse number="20">ಯೊಕ್ತಾನನ ಸಂತಾನದವರು: ಅಲ್ಮೋದಾದ್, ಶೆಲೆಪ್, ಹಜರ್ಮಾವೆತ್, ಯೆರಹ,</verse>
				<verse number="21">ಹದೋರಾಮ್, ಊಜಾಲ್, ದಿಕ್ಲಾ,</verse>
				<verse number="22">ಏಬಾಲ್, ಅಬೀಮಯೇಲ್, ಶೆಬಾ,</verse>
				<verse number="23">ಓಫೀರ್, ಹವೀಲಾ ಹಾಗೂ ಯೋಬಾಬ್ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಪುತ್ರರು.</verse>
				<verse number="24">ಶೇಮನಿಂದ ಅಬ್ರಾಮನವರೆಗಿನ ಸಂತತಿಯವರು ಇವರು. ಅರ್ಪಕ್ಷದ್, ಶೆಲಹ,</verse>
				<verse number="25">ಏಬೆರ್, ಪೆಲೆಗ್, ರೆಗೂ,</verse>
				<verse number="26">ಸೆರೂಗ್, ನಾಹೋರ್, ತೆರಹ,</verse>
				<verse number="27">ಅಬ್ರಾಮ್ ಇವನು ಅಬ್ರಹಾಮ ಎಂಬ ಹೆಸರು ಹೊಂದಿದವನು.</verse>
				<verse number="28">ಅಬ್ರಹಾಮನಿಗೆ ಇಬ್ಬರು ಮಕ್ಕಳು: ಇಸಾಕ ಮತ್ತು ಇಷ್ಮಾಯೇಲ್.</verse>
				<verse number="29">ಇಷ್ಮಾಯೇಲನ ಮಕ್ಕಳು ಹನ್ನೆರಡು ಗೋತ್ರಗಳ ಮುಖ್ಯಸ್ಥರಾದರು. ಅವರು ನೆಬಾಯೋತ್, ಇಷ್ಮಾಯೇಲನ ಹಿರೀಮಗನಿಂದ ಈ ಹೆಸರಿನ ಉತ್ಪತ್ತಿ, ಕೇದಾರ್, ಅದ್ಬೆಯೇಲ್, ಮಿಬ್ಸಾಮ್,</verse>
				<verse number="30">ಮಿಷ್ಮಾ, ದೂಮಾ, ಮಸ್ಸಾ, ಹದದ್, ತೇಮ,</verse>
				<verse number="31">ಯೆಟೂರ್, ನಾಫೀಷ್, ಕೇದೆಮ. ಇಷ್ಮಾಯೇಲನ ಸಂತಾನದವರು ಇವರೇ.</verse>
				<verse number="32">ಅಬ್ರಹಾಮನಿಗೆ ಕೆಟೂರಳೆಂಬ ಉಪಪತ್ನಿ ಇದ್ದಳು. ಅವಳಿಂದ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಎಂಬ ಆರು ಜನ ಮಕ್ಕಳು ಜನಿಸಿದರು. ಯೊಕ್ಷಾನನಿಗೆ ಶೆಬಾ ಮತ್ತು ದೆದಾನ್ ಹುಟ್ಟಿದರು.</verse>
				<verse number="33">ಮಿದ್ಯಾನನ ಪುತ್ರರು: ಏಫಾ, ಏಫೆರ್, ಹನೋಕ್, ಅಬೀದ, ಎಲ್ದಾಯ. ಇವರೆಲ್ಲರೂ ಕೆಟೂರಳ ಸಂತತಿಯವರು.</verse>
				<verse number="34">ಅಬ್ರಹಾಮನು ಸಾರಳಿಂದ ಇಸಾಕನನ್ನು ಪಡೆದನು. ಇಸಾಕನಿಗೆ ಇಬ್ಬರು ಮಕ್ಕಳು ಏಸಾವ ಮತ್ತು ಯಾಕೋಬ.</verse>
				<verse number="35">ಏಸಾವನ ಪುತ್ರರು ಎಲೀಫಜ್, ರೆಯೂವೇಲ, ಯೆಯೂಷ್, ಯಳಾಮ್ ಹಾಗೂ ಕೋರಹ ಎಂಬವರು.</verse>
				<verse number="36">ಎಲೀಫಜನ ಮಕ್ಕಳು ತೇಮಾನ್, ಓಮಾರ್, ಚೆಫೀ, ಗತಾಮ್, ಕೆನಜ್; ತಿಮ್ನಾ ಅವಳಿಂದ ಜನಿಸಿದ ಅಮಾಲೇಕ್ ಎಂಬವರು.</verse>
				<verse number="37">ರೆಯೂವೇಲನ ಮಕ್ಕಳು ನಹತ್, ಜೆರಹ, ಶಮ್ಮಾ ಮತ್ತು ಮಿಜ್ಜಾ ಎಂಬವರು.</verse>
				<verse number="38">ಈ ಕೆಳಗೆ ನಮೂದಿಸಿದ ಎದೋಮಿನ ಮೂಲ ನಿವಾಸಿಗಳು ಸೇಯೀರನಿಂದ ಹುಟ್ಟಿದವರು ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ, ದೀಶೋನ್, ಏಚೆರ್, ದೀಶಾನ್.</verse>
				<verse number="39">ಲೋಟಾನನ ಪುತ್ರರು ಯಾರೆಂದರೆ: ಹೋರಿ ಮತ್ತು ಹೋಮಾಮ್. ಲೋಟಾನನಿಗೆ ತಿಮ್ನಾ ಎಂಬ ಸಹೋದರಿ ಇದ್ದಳು.</verse>
				<verse number="40">ಶೋಬಾಲನ ಮಕ್ಕಳು ಯಾರೆಂದರೆ: ಅಲ್ವಾನ್, ಮಾನಹತ್, ಏಬಾಲ್, ಶೆಫೋ ಮತ್ತು ಓನಾಮ್. ಸಿಬೆಯೋನನ ಮಕ್ಕಳು ಅಯ್ಯಾಹ ಮತ್ತು ಅನಾಹ ಎಂಬುವರು.</verse>
				<verse number="41">ಅನಾಹನ ಮಗನು ದೀಶೋನ್. ದೀಶೋನನ ಮಕ್ಕಳು ಯಾರೆಂದರೆ: ಹಮ್ರಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್.</verse>
				<verse number="42">ಏಚೆರನ ಮಕ್ಕಳು ಯಾರೆಂದರೆ: ಬಿಲ್ಹಾನ್, ಜಾವಾನ್ ಮತ್ತು ಆಕಾನ್. ದೀಶಾನನ ಮಕ್ಕಳು ಯಾರೆಂದರೆ: ಊಚ್ ಮತ್ತು ಅರಾನ್.</verse>
				<verse number="43">ಇಸ್ರಾಯೇಲರನ್ನು ಯಾವ ಅರಸನೂ ಆಳುವುದಕ್ಕಿಂತ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸರು ಇವರೇ: ಬೆಯೋರನ ಮಗನಾದ ಬೆಲಗನು; ಅವನ ಪಟ್ಟಣದ ಹೆಸರು ದಿನ್ಹಾಬಾ.</verse>
				<verse number="44">ಬೆಲಗನ ಮರಣದ ನಂತರ ಅವನ ಬದಲಾಗಿ ಬೊಚ್ರದವನಾದ ಜೆರಹನ ಮಗ ಯೋಬಾಬನು ಉತ್ತರಾಧಿಕಾರಿಯಾದನು.</verse>
				<verse number="45">ಯೋಬಾಬನ ಮರಣದ ನಂತರ ಅವನ ಬದಲಾಗಿ ತೇಮಾನೀಯರ ದೇಶದ ಹುಷಾಮನು ಅರಸನಾದನು.</verse>
				<verse number="46">ಹುಷಾಮನ ಮರಣದ ನಂತರ ಅವೀತದ ಬೆದದನ ಮಗ ಹದದ ಅರಸನಾದನು. ಇವನು ಮೋವಾಬ್ ದೇಶದಲ್ಲಿ ನಡೆದ ಯುದ್ಧದಲ್ಲಿ ಮಿದ್ಯಾನರನ್ನು ಸೋಲಿಸಿದ; ಅವನ ರಾಜಧಾನಿಯ ಹೆಸರು ಅವೀತ್.</verse>
				<verse number="47">ಹದದ ಮೃತನಾದ ಮೇಲೆ ಅವನ ಬದಲಾಗಿ ಮಸ್ರೇಕದವನಾದ ಸಮ್ಲಾಹನು ಅರಸನಾದನು.</verse>
				<verse number="48">ಸಮ್ಲಾಹನ ಮರಣದ ನಂತರ ಅವನ ಬದಲಾಗಿ ಯೂಫ್ರೇಟೀಸ್ ನದಿತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಅರಸನಾದನು.</verse>
				<verse number="49">ಸೌಲನು ಮೃತನಾದ ಮೇಲೆ ಅಕ್ಬೋರನ ಮಗ ಬಾಳ್ ಹಾನಾನ್ ಅರಸನಾದನು.</verse>
				<verse number="50">ಬಾಳ್ ಹಾನಾನನು ಮೃತನಾದ ಮೇಲೆ ಅವನ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾವು. ಅವನ ಹೆಂಡತಿಯ ಹೆಸರು ಮೆಹೇಟಬೇಲ್. ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.</verse>
				<verse number="51">ಹದದನು ಮೃತನಾದನು. ಎದೋಮ್ಯರ ಮುಖಂಡರ ಹೆಸರುಗಳು ಯಾವುವೆಂದರೆ: ತಿಮ್ನಾ, ಅಲ್ವಾ, ಯೆತೇತ,</verse>
				<verse number="52">ಒಹೊಲೀಬಾಮ, ಏಲಾ, ಪೀನೋನ್</verse>
				<verse number="53">ಕೆನಜ್, ತೇಮಾನ್, ಮಿಬ್ಜಾರ,</verse>
				<verse number="54">ಮಗ್ದೀಯೇಲ್ ಮತ್ತು ಗೀರಾಮ್ ಎಂಬ ಎದೋಮ್ಯರ ಮುಖಂಡರು.</verse>
			</chapter>
			<chapter number="2">
				<verse number="1">ಇಸ್ರಾಯೇಲನ ಪುತ್ರರು: ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್,</verse>
				<verse number="2">ದಾನ್, ಯೋಸೇಫ್, ಬೆನ್ಯಾಮೀನ್, ನಫ್ತಾಲಿ, ಗಾದ್ ಮತ್ತು ಆಶೇರ್.</verse>
				<verse number="3">ಯೆಹೂದನ ಪುತ್ರರು: ಏರ್, ಓನಾನ್, ಶೇಲಹ. ಈ ಮೂವರು ಅವನಿಗೆ ಶೂನನ ಮಗಳಾದ ಕಾನಾನ್ ದೇಶದವಳಿಂದ ಹುಟ್ಟಿದರು. ಯೆಹೂದನ ಚೊಚ್ಚಲಮಗನಾದ ಏರನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟವನಾದ್ದರಿಂದ, ದೇವರು ಅವನನ್ನು ಮರಣಕ್ಕೆ ಒಪ್ಪಿಸಿದರು.</verse>
				<verse number="4">ಯೆಹೂದನ ಸೊಸೆ ತಾಮಾರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಪುತ್ರರೆಲ್ಲರೂ ಐದು ಮಂದಿ.</verse>
				<verse number="5">ಪೆರೆಚನ ಪುತ್ರರು: ಹೆಚ್ರೋನ್, ಹಾಮೂಲ್.</verse>
				<verse number="6">ಜೆರಹನ ಪುತ್ರರು: ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್ ಮತ್ತು ದಾರಾ, ಒಟ್ಟು ಐದು ಮಂದಿ.</verse>
				<verse number="7">ಕರ್ಮೀಯ ಪುತ್ರರು: ಮೀಸಲಾಗಿಟ್ಟಿದ್ದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲರನ್ನು ಆಪತ್ತಿಗೆ ಗುರಿಪಡಿಸಿದ ಆಕಾನನು.</verse>
				<verse number="8">ಏತಾನನ ಮಗನು ಅಜರ್ಯನು.</verse>
				<verse number="9">ಹೆಚ್ರೋನನಿಗೆ ಹುಟ್ಟಿದ ಪುತ್ರರು: ಯೆರಹ್ಮೇಲ್, ರಾಮ್, ಕೆಲೂಬಾಯ್.</verse>
				<verse number="10">ರಾಮನು ಅಮ್ಮೀನಾದಾಬನ ತಂದೆಯಾಗಿದ್ದನು. ಅಮ್ಮೀನಾದಾಬನು ಯೆಹೂದನ ಮಕ್ಕಳಿಗೆ ನಾಯಕನಾದ ನಹಶೋನನ ತಂದೆ.</verse>
				<verse number="11">ನಹಶೋನನು ಸಲ್ಮನನ ತಂದೆಯಾಗಿದ್ದನು, ಸಲ್ಮನ ಬೋವಜನ ತಂದೆ,</verse>
				<verse number="12">ಬೋವಜನು ಓಬೇದನ ತಂದೆ, ಓಬೇದನು ಇಷಯನ ತಂದೆ.</verse>
				<verse number="13">ಇಷಯನು ತನ್ನ ಚೊಚ್ಚಲ ಮಗ ಎಲೀಯಾಬನನ್ನೂ, ಎರಡನೆಯವನಾದ ಅಬೀನಾದಾಬನನ್ನೂ, ಮೂರನೆಯವನಾದ ಶಿಮ್ಮನನ್ನೂ,</verse>
				<verse number="14">ನಾಲ್ಕನೆಯವನಾದ ನೆತನೆಯೇಲನನ್ನೂ, ಐದನೆಯವನಾದ ರದ್ದೈನನ್ನೂ,</verse>
				<verse number="15">ಆರನೆಯವನಾದ ಓಚೆಮನನ್ನೂ, ಏಳನೆಯವನಾದ ದಾವೀದನಿಗೆ ತಂದೆಯಾಗಿದ್ದನು.</verse>
				<verse number="16">ಅವರ ಇಬ್ಬರು ಸಹೋದರಿಯರು ಚೆರೂಯಳು, ಅಬೀಗೈಲಳು. ಚೆರೂಯಳ ಮೂವರು ಮಕ್ಕಳು ಅಬೀಷೈ, ಯೋವಾಬ್, ಅಸಾಯೇಲ್.</verse>
				<verse number="17">ಅಬೀಗೈಲಳು ಅಮಾಸನ ತಾಯಿ, ಅಮಾಸನ ತಂದೆಯು ಇಷ್ಮಾಯೇಲನ ವಂಶದ ಯೆತೆರನು.</verse>
				<verse number="18">ಹೆಚ್ರೋನನ ಮಗನಾದ ಕಾಲೇಬನು ಅಜೂಬಳಿಂದಲೂ ಯೆರ್ಯೋತಳಿಂದಲೂ ಮಕ್ಕಳನ್ನು ಪಡೆದನು. ಇವಳ ಪುತ್ರರು: ಯೇಷೆರನು, ಶೋಬಾಬನು, ಅರ್ದೋನನು.</verse>
				<verse number="19">ಅಜೂಬಳ ಮರಣದ ನಂತರ, ಕಾಲೇಬನು ಎಫ್ರಾತಳನ್ನು ಮದುವೆಯಾದನು. ಅವಳು ಅವನಿಗೆ ಹೂರನನ್ನು ಹೆತ್ತಳು.</verse>
				<verse number="20">ಹೂರನು ಊರಿಯನ ತಂದೆ; ಊರಿಯನು ಬೆಚಲಯೇಲನ ತಂದೆ.</verse>
				<verse number="21">ತರುವಾಯ ಹೆಚ್ರೋನನು ಅರವತ್ತು ವರ್ಷದವನಾಗಿರುವಾಗ ಗಿಲ್ಯಾದನ ತಂದೆಯಾದ ಮಾಕೀರನ ಮಗಳನ್ನು ಮದುವೆಯಾದನು. ಅವಳು ಅವನಿಗೆ ಸೆಗೂಬ ಎಂಬ ಮಗನನ್ನು ಹೆತ್ತಳು.</verse>
				<verse number="22">ಸೆಗೂಬನು ಯಾಯೀರನ ತಂದೆ, ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತು ಮೂರು ಪಟ್ಟಣಗಳು ಇದ್ದವು.</verse>
				<verse number="23">ಇವನಿಗೆ ಗಿಲ್ಯಾದಿನ ದೇಶದಲ್ಲಿ ಅರುವತ್ತು ಪಟ್ಟಣಗಳು ಇದ್ದವು. ಇದಲ್ಲದೆ ಅವನು ಗೆಷೂರ್ಯರನ್ನೂ, ಅರಾಮ್ಯರನ್ನೂ, ಯಾಯೀರನ ಪಟ್ಟಣಗಳನ್ನೂ, ಕೆನಾತ್ ಮತ್ತು ಅದರ ಪಟ್ಟಣಗಳನ್ನೂ, ಒಟ್ಟು ಅರವತ್ತು ಪಟ್ಟಣಗಳನ್ನು ಗೆದ್ದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ವಂಶದವರಿಗೆ ಇದ್ದವು.</verse>
				<verse number="24">ಹೆಚ್ರೋನನು ಕಾಲೇಬ್ ಎಫ್ರಾತದಲ್ಲಿ ಸತ್ತ ತರುವಾಯ ಹೆಚ್ರೋನನ ಹೆಂಡತಿಯಾದ ಅಬೀಯಳು ಅವನಿಗೆ ಅಷ್ಹೂರನನ್ನು ಹೆತ್ತಳು. ಇವನು ತೆಕೋವನ ತಂದೆಯು.</verse>
				<verse number="25">ಹೆಚ್ರೋನನ ಚೊಚ್ಚಲ ಮಗ ಯೆರಹ್ಮೇಲನ ಪುತ್ರರು: ಚೊಚ್ಚಲ ಮಗ ರಾಮ ಮತ್ತು ಬೂನ, ಓರೆನ, ಓಚೆಮ, ಅಹೀಯ.</verse>
				<verse number="26">ಈ ಯೆರಹ್ಮೇಲನಿಗೆ ಮತ್ತೊಬ್ಬ ಹೆಂಡತಿ ಇದ್ದಳು. ಅವಳ ಹೆಸರು ಅಟಾರಳು; ಅವಳು ಓನಾಮನ ತಾಯಿ.</verse>
				<verse number="27">ಯೆರಹ್ಮೇಲನ ಚೊಚ್ಚಲಮಗನಾದ ರಾಮನ ಪುತ್ರರು: ಮಾಚ್, ಯಾಮೀನ್, ಏಕೆರ್.</verse>
				<verse number="28">ಓನಾಮನ ಪುತ್ರರು: ಶಮ್ಮಾಯ, ಯಾದ; ಶಮ್ಮಾಯನ ಪುತ್ರರು: ನಾದಾಬನು, ಅಬಿಷೂರನು.</verse>
				<verse number="29">ಅಬಿಷೂರನ ಹೆಂಡತಿಯ ಹೆಸರು ಅಬೀಹೈಲ; ಅವಳು ಅವನಿಗೆ ಅಹ್ಬಾನನನ್ನೂ, ಮೋಲೀದನನ್ನೂ ಹೆತ್ತಳು.</verse>
				<verse number="30">ನಾದಾಬನ ಪುತ್ರರು ಸೆಲೆದ್, ಅಪ್ಪಯಿಮ್; ಸೆಲೆದನು ಮಕ್ಕಳಿಲ್ಲದೆ ಸತ್ತನು.</verse>
				<verse number="31">ಅಪ್ಪಯಿಮ್ ಇವನ ಪುತ್ರರು: ಇಷ್ಷೀಯು; ಇಷ್ಷೀಯನ ಮಗನು ಶೇಷಾನನು; ಶೇಷಾನನ ಮಗನು; ಅಹ್ಲಾಯಿಯನು;</verse>
				<verse number="32">ಶಮ್ಮಾಯನ ಸಹೋದರನಾದ ಯಾದನ ಪುತ್ರರು: ಯೆತೆರನ ಮತ್ತು ಯೋನಾತಾನ್. ಯೆತೆರನು ಮಕ್ಕಳಿಲ್ಲದೆ ಸತ್ತನು;</verse>
				<verse number="33">ಯೋನಾತಾನನ ಪುತ್ರರು: ಪೆಲೆತನು, ಜಾಜನು. ಇವರೇ ಯೆರಹ್ಮೇಲನ ವಂಶಜರು.</verse>
				<verse number="34">ಶೇಷಾನನಿಗೆ ಪುತ್ರರಿರಲಿಲ್ಲ. ಪುತ್ರಿಯರಿದ್ದರು. ಶೇಷಾನನಿಗೆ ಯರ್ಹನೆಂಬ ಹೆಸರುಳ್ಳ ಈಜಿಪ್ಟಿನವನಾದ ಸೇವಕನಿದ್ದನು.</verse>
				<verse number="35">ಶೇಷಾನನು ತನ್ನ ಪುತ್ರಿಯನ್ನು ತನ್ನ ಸೇವಕ ಯರ್ಹನಿಗೆ ಮದುವೆಮಾಡಿಕೊಟ್ಟನು. ಅವಳು ಅವನಿಗೆ ಅತ್ತೈಯನ್ನು ಹೆತ್ತಳು.</verse>
				<verse number="36">ಅತ್ತೈ ನಾತಾನನ ತಂದೆ; ನಾತಾನನು ಜಾಬಾದನ ತಂದೆ.</verse>
				<verse number="37">ಜಾಬಾದನು ಎಫ್ಲಾಲನನ್ನು ಪಡೆದನು; ಎಫ್ಲಾನನು ಓಬೇದನನ್ನು ಪಡೆದನು.</verse>
				<verse number="38">ಓಬೇದನು ಯೇಹುವನ್ನು ಪಡೆದನು; ಯೇಹುವು ಅಜರ್ಯನನ್ನು ಪಡೆದನು.</verse>
				<verse number="39">ಅಜರ್ಯನು ಹೆಲೆಚನನ್ನು ಪಡೆದನು; ಹೆಲೆಚನು ಎಲ್ಲಾಸನನ್ನು ಪಡೆದನು.</verse>
				<verse number="40">ಎಲ್ಲಾಸನು ಸಿಸ್ಮೈಯನ್ನು ಪಡೆದನು; ಸಿಸ್ಮೈಯು ಶಲ್ಲೂಮನನ್ನು ಪಡೆದನು.</verse>
				<verse number="41">ಶಲ್ಲೂಮನು ಯೆಕಮ್ಯಾಹನ ತಂದೆ; ಯೆಕಮ್ಯಾಹನು ಎಲೀಷಾಮನ ತಂದೆ.</verse>
				<verse number="42">ಯೆರಹ್ಮೇಲನ ಸಹೋದರನಾದ ಕಾಲೇಬನ ಪುತ್ರರು: ಅವನ ಚೊಚ್ಚಲ ಮಗನು ಮೇಷನು; ಇವನು ಜೀಫ್ಯನಿಗೆ ತಂದೆಯಾಗಿದ್ದನು. ಹೆಬ್ರೋನನ ತಂದೆಯಾದ ಮಾರೇಷನಿಗೆ ಮಕ್ಕಳು ಜನಿಸಿದರು.</verse>
				<verse number="43">ಹೆಬ್ರೋನನ ಪುತ್ರರು: ಕೋರಹನು, ತಪ್ಪೂಹನು, ರೆಕೆಮನು, ಶೆಮನು.</verse>
				<verse number="44">ಶೆಮನು ರಹಮ್ಯನ ತಂದೆ ರಹಮ್ಯನು ಯೊರ್ಕೆಯಾಮನ ತಂದೆ. ರೆಕೆಮನು ಶಮ್ಮಾಯನನ್ನು ಪಡೆದನು.</verse>
				<verse number="45">ಶಮ್ಮಾಯಿಯ ಮಗನು ಮಾವೋನ್ಯನು; ಈ ಮಾವೋನ್ಯನು ಬೇತ್ ಚೂರನಿಗೆ ತಂದೆಯಾಗಿದ್ದನು.</verse>
				<verse number="46">ಕಾಲೇಬನ ಉಪಪತ್ನಿಯಾದ ಏಫಾಳು ಹಾರಾನ್, ಮೋಚ, ಗಾಜೇಜ ಎಂಬುವರನ್ನು ಹೆತ್ತಳು. ಹಾರಾನನು ಗಾಜೇಜನ ತಂದೆ.</verse>
				<verse number="47">ಯಾದೈಯ ಪುತ್ರರು: ರೆಗೆಮ್, ಯೋತಾಮ್, ಗೇಷಾನ್, ಪೆಲಟ್, ಏಫ್, ಶಾಫ್.</verse>
				<verse number="48">ಕಾಲೇಬನ ಇನ್ನೊಬ್ಬ ಉಪಪತ್ನಿಯಾದ ಮಾಕಳು ಶೇಬರ್, ತಿರ್ಹನ ಎಂಬುವರನ್ನು ಹೆತ್ತಳು.</verse>
				<verse number="49">ಇವಳಲ್ಲಿ ಮದ್ಮನ್ನದವರ ಮೂಲಪುರುಷನಾದ ಶಾಫ್, ಮಕ್‌ಬೇನ ಮತ್ತು ಗಿಬೆಯ ಊರುಗಳವರ ಮೂಲಪುರುಷನಾದ ಶೆವ ಇವರು ಹುಟ್ಟಿದರು. ಕಾಲೇಬನ ಮಗಳು ಅಕ್ಸಾ.</verse>
				<verse number="50">ಇನ್ನುಳಿದ ಕಾಲೇಬನ ವಂಶಜರು: ಕಾಲೇಬನಿಗೆ ಅವನ ಹೆಂಡತಿ ಎಫ್ರಾತಳಿಂದ ಜನಿಸಿದ ಚೊಚ್ಚಲ ಮಗನ ಹೆಸರು ಹೂರ್. ಹೂರನ ಮಗ ಶೋಬಾಲ್ ಕಿರ್ಯತ್ ಯಾರೀಮ್ ಪಟ್ಟಣವನ್ನೂ,</verse>
				<verse number="51">ಅವನ ಇನ್ನೊಬ್ಬ ಮಗ ಸಲ್ಮ ಬೇತ್ಲೆಹೇಮನ್ನೂ, ಅವನ ಮೂರನೆಯ ಮಗ ಹಾರೇಫ್, ಬೇತ್ಗಾದೇರ್ ಪಟ್ಟಣವನ್ನೂ ಕಟ್ಟಿಸಿದರು.</verse>
				<verse number="52">ಕಿರ್ಯತ್ ಯಾರೀಮ್ ಪಟ್ಟಣದ ಸ್ಥಾಪಕ ಶೋಬಾಲನು ಹಾರೋಯೆ ಜನರ, ಮಾನಹತಿಯರ ಅರ್ಧದಷ್ಟು ಜನರ,</verse>
				<verse number="53">ಹಾಗೂ ಕಿರ್ಯತ್ ಯಾರೀಮನವರ ಗೋತ್ರಗಳು: ಯೆತೆರಿಯರು, ಪೂತ್ಯರು, ಶುಮಾತ್ಯರು, ಮಿಷ್ರಾಗ್ಯರು, ಇವರಿಂದ ಚೊರ್‍ರಾತ್ಯರೂ, ಎಷ್ಟಾವೋಲ್ಯರೂ ಹುಟ್ಟಿದರು.</verse>
				<verse number="54">ಸಲ್ಮನ ವಂಶಜರು: ಬೇತ್ಲೆಹೇಮ್, ನೆಟೋಫಾ, ಅಟರೋತ್ ಬೇತ್ಯೋವಾಬ್ ಊರುಗಳವರೂ, ಚೊರ್ಗದಲ್ಲಿ ವಾಸಿಸುವ ಮಾನಹತಿಯರಲ್ಲಿ ಅರ್ಧ ಜನರೂ ಉತ್ಪತ್ತಿಯಾದರು.</verse>
				<verse number="55">ಯಾಬೇಚಿನಲ್ಲಿ ವಾಸಿಸುವ ಬರಹಗಾರರ ಕುಟುಂಬದವರಾದ ತಿರ್ರಾತ್ಯರು, ಶಿಮೆಯಾತ್ಯರು, ಸೂಕಾತ್ಯರು ಇವರು ರೇಕಾಬನ ಮನೆಯವರ ಮೂಲ ಪುರುಷನಾಗಿರುವ ಹಮ್ಮತನಿಂದ ಉತ್ಪನ್ನರಾದ ಕೇನ್ಯರು.</verse>
			</chapter>
			<chapter number="3">
				<verse number="1">ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಪುತ್ರರು ಯಾರೆಂದರೆ: ಇಜ್ರೆಯೇಲ್ ಪಟ್ಟಣದ ಅಹೀನೋವಮಳ ಚೊಚ್ಚಲ ಮಗ ಅಮ್ನೋನನು; ಕರ್ಮೇಲ್ಯಳಾದ ಅಬೀಗೈಲಳಿಂದ ಹುಟ್ಟಿದ ಎರಡನೆಯವನಾದ ದಾನಿಯೇಲನು,</verse>
				<verse number="2">ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು, ಹಗ್ಗೀತಳಿಂದ ಹುಟ್ಟಿದ ನಾಲ್ಕನೆಯ ಮಗ ಅದೋನೀಯನು.</verse>
				<verse number="3">ಅಬೀಟಾಲಳಿಂದ ಹುಟ್ಟಿದ ಐದನೆಯ ಮಗ ಶೆಫಟ್ಯನು, ದಾವೀದನ ಹೆಂಡತಿ ಎಗ್ಲಳಿಂದ ಹುಟ್ಟಿದ ಆರನೆಯ ಮಗ ಇತ್ರಾಮನು.</verse>
				<verse number="4">ಈ ಆರು ಮಂದಿ ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದವರು. ಅಲ್ಲಿ ಅವನು ಏಳುವರೆ ವರ್ಷ ಆಳಿದನು. ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳಿದನು.</verse>
				<verse number="5">ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ದಾವೀದನ ಹೆಂಡತಿ ಬತ್ಷೆಬೆಳು ಅಮ್ಮಿಯೇಲನ ಮಗಳು. ಆಕೆಗೆ ಶಮ್ಮೂವ ಎಂಬ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಜನ ಗಂಡು ಮಕ್ಕಳು ಜನಿಸಿದರು.</verse>
				<verse number="6">ಇದಲ್ಲದೆ ಇಬ್ಹಾರ್, ಎಲೀಷಾಮ, ಎಲೀಫೆಲೆಟ್,</verse>
				<verse number="7">ನೋಗಹ, ನೆಫೆಗ್, ಯಾಫೀಯ,</verse>
				<verse number="8">ಎಲೀಷಾಮ, ಎಲ್ಯಾದ, ಎಲೀಫೆಲೆಟ್, ಈ ಒಂಬತ್ತು ಮಂದಿ ಮಕ್ಕಳಿದ್ದರು.</verse>
				<verse number="9">ಉಪಪತ್ನಿಗಳ ಮಕ್ಕಳು ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು; ತಾಮಾರಳು ಇವರ ಸಹೋದರಿಯಾಗಿದ್ದಳು.</verse>
				<verse number="10">ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು;</verse>
				<verse number="11">ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೋವಾಷನು.</verse>
				<verse number="12">ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು.</verse>
				<verse number="13">ಇವನ ಮಗನು ಆಹಾಜನು; ಇವನ ಮಗನು ಹಿಜ್ಕೀಯನು; ಇವನ ಮಗನು ಮನಸ್ಸೆಯು.</verse>
				<verse number="14">ಇವನ ಮಗನು ಆಮೋನನು; ಇವನ ಮಗನು ಯೋಷೀಯನು.</verse>
				<verse number="15">ಯೋಷೀಯನ ಮಕ್ಕಳು: ಚೊಚ್ಚಲಮಗನಾದ ಯೋಹಾನಾನ್, ಎರಡನೆಯವನಾದ ಯೆಹೋಯಾಕೀಮ್, ಮೂರನೆಯವನಾದ ಚಿದ್ಕೀಯ, ನಾಲ್ಕನೆಯವನಾದ ಶಲ್ಲೂಮ್.</verse>
				<verse number="16">ಯೆಹೋಯಾಕೀಮನ ಮಕ್ಕಳು: ಇವನ ಮಗನಾದ ಯೆಕೊನ್ಯ; ಇವನ ಮಗನು ಚಿದ್ಕೀಯ.</verse>
				<verse number="17">ಯೆಹೋಯಾಕೀನನು ಸೆರೆಯಲ್ಲಿದ್ದಾಗ ಅವನ ವಂಶಜರು: ಇವನ ಮಗ ಶೆಯಲ್ತಿಯೇಲ್,</verse>
				<verse number="18">ಮಲ್ಕೀರಾಮ, ಪೆದಾಯ್, ಶೆನಚ್ಚರ, ಯೆಕಮ್ಯ, ಹೋಷಾಮ ಮತ್ತು ನೆದಬ್ಯ.</verse>
				<verse number="19">ಪೆದಾಯನ ಮಕ್ಕಳು: ಜೆರುಬ್ಬಾಬೆಲನು, ಶಿಮ್ಮೀ. ಜೆರುಬ್ಬಾಬೆಲನ ಮಕ್ಕಳು: ಮೆಷುಲ್ಲಾಮನು, ಹನನ್ಯನು. ಇವರ ಸಹೋದರಿಯಾದ ಶೆಲೋಮೀತಳು.</verse>
				<verse number="20">ಇವರಲ್ಲದೆ ಐವರು ಗಂಡು ಮಕ್ಕಳು ಅವನಿಗಿದ್ದರು: ಹಷುಬನು, ಓಹೆಲನು, ಬೆರೆಕ್ಯನು, ಹಸದ್ಯ, ಯೂಷಬ್ಹೆಸೆದ್</verse>
				<verse number="21">ಹನನ್ಯನ ವಂಶಜರು: ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು.</verse>
				<verse number="22">ಶೆಕನ್ಯನ ವಂಶಜರು: ಶೆಮಾಯನ ಮತ್ತು ಅವನ ಮಕ್ಕಳು ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ, ಶಾಫಾಟ್, ಈ ಆರು ಮಂದಿಯು.</verse>
				<verse number="23">ನೆಯರ್ಯನ ಮಕ್ಕಳು: ಎಲ್ಯೋವೇನೈನು, ಹಿಜ್ಕೀಯನು, ಅಜ್ರೀಕಾಮನು, ಈ ಮೂರು ಮಂದಿಯು.</verse>
				<verse number="24">ಎಲ್ಯೋವೇನೈನ ಮಕ್ಕಳು: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ, ಅನಾನೀ ಎಂಬ ಏಳುಮಂದಿ.</verse>
			</chapter>
			<chapter number="4">
				<verse number="1">ಯೆಹೂದನ ವಂಶಜರು: ಪೆರೆಚನು, ಹೆಚ್ರೋನನು, ಕರ್ಮೀ, ಹೂರನು, ಶೋಬಾಲನು.</verse>
				<verse number="2">ಶೋಬಾಲನ ಮಗನಾದ ರೆವಾಯನು ಯಹತನ ತಂದೆ. ಯಹತನು ಅಹೂಮೈ ಮತ್ತು ಲಹದ್ ಎಂಬವರ ತಂದೆ. ಇವರೇ ಚೊರ್‍ರದ ಕುಟುಂಬದವರು.</verse>
				<verse number="3">ಏಟಾಮನ ಪುತ್ರರು: ಇಜ್ರೆಯೇಲ್, ಇಷ್ಮ ಮತ್ತು ಇಬ್ಬಾಷ್ ಮತ್ತು ಇವರ ತಂಗಿ ಹಚೆಲೆಲ್‌ಪೋನೀ ಎಂಬವರು.</verse>
				<verse number="4">ಪೆನೂಯೇಲ್, ಗೆದೋರ್ ವಂಶದವರಿಗೆ ಮೂಲಪುರುಷನಾಗಿದ್ದನು. ಏಜೆರ್ ಹೂಷಾಹರ ಮೂಲಪುರುಷನಾಗಿದ್ದನು. ಇವರು ಎಫ್ರಾತಾಹ ಎಂಬಾಕೆಯ ಚೊಚ್ಚಲಮಗನಾದ ಹೂರನ ಮಕ್ಕಳು; ಈ ಹೂರನೇ ಬೇತ್ಲೆಹೇಮ್ ವಂಶದವರಿಗೆ ಮೂಲಪುರುಷನು.</verse>
				<verse number="5">ತೆಕೋವದ ತಂದೆ ಅಷ್ಹೂರನಿಗೆ ಹೆಲಾಹ, ನಾರ ಎಂಬ ಇಬ್ಬರು ಪತ್ನಿಯರಿದ್ದರು.</verse>
				<verse number="6">ನಾರಳು ಅವನಿಗೆ ಅಹುಜ್ಜಾಮ್, ಹೇಫೆರ್, ತೇಮಾನಿ, ಅಹಷ್ಟಾರ್ಯನನ್ನು ಹೆತ್ತಳು. ಇವರೇ ನಾರಳ ಮಕ್ಕಳು.</verse>
				<verse number="7">ಹೆಲಾಹಳ ಪುತ್ರರು: ಚೆರೆತ್, ಇಚ್ಹಾರ್, ಎತ್ನಾನ್.</verse>
				<verse number="8">ಕೋಚನು ಅನೂಬ್‌ನನ್ನೂ, ಚೊಬೇಬನನ್ನೂ, ಹಾರುಮನ ಮಗನಾದ ಅಹರ‍್ಹೇಲನ ಸಂತತಿಗಳನ್ನೂ ಪಡೆದನು.</verse>
				<verse number="9">ಯಾಬೇಚನು ತನ್ನ ಸಹೋದರರಿಗಿಂತ ಘನವುಳ್ಳವನಾಗಿದ್ದನು. ಅವನ ತಾಯಿ, “ನಾನು ಇವನನ್ನು ವ್ಯಥೆಯಿಂದ ಹೆತ್ತೆನು,” ಎಂದು ಅವನಿಗೆ ಯಾಬೇಚನೆಂಬ ಹೆಸರಿಟ್ಟಳು.</verse>
				<verse number="10">ಆದರೆ ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀವು ನನ್ನನ್ನು ನಿಜವಾಗಿ ಆಶೀರ್ವದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿಮ್ಮ ಹಸ್ತವು ನನ್ನ ಸಂಗಡ ಇರಲಿ; ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನ್ನು ಕೇಡಿನಿಂದ ತಪ್ಪಿಸಿರಿ,” ಎಂದು ಮೊರೆಯಿಟ್ಟನು. ದೇವರು ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿದರು.</verse>
				<verse number="11">ಶೂಹನ ಸಹೋದರ ಕೆಲೂಬನು ಎಷ್ಟೋನನ ತಂದೆ ಮೆಹೀರನನ್ನು ಪಡೆದನು.</verse>
				<verse number="12">ಎಷ್ಟೋನನಿಂದ ಬೇತ್ ರಾಫಾ, ಪಾಸೇಹ, ತೆಹಿನ್ನ ಎಂಬ ಮೂವರು ಮಕ್ಕಳು ಇದ್ದರು. ತೆಹಿನ್ನ ನಾಹಷ್ ಪಟ್ಟಣದ ಸ್ಥಾಪಕ. ಈ ಜನರ ವಂಶಜರು ರೇಕಾ ಎಂಬಲ್ಲಿ ವಾಸಿಸಿದ್ದರು.</verse>
				<verse number="13">ಕೆನಾಜನ ಪುತ್ರರು: ಒತ್ನಿಯೇಲನು ಸೆರಾಯನು. ಒತ್ನಿಯೇಲನ ಪುತ್ರರು: ಹತತ್ ಹಾಗು ಮೆಯೋನೋತೈ.</verse>
				<verse number="14">ಮೆಯೋನೋತೈ ಒಫ್ರಾಹನನ್ನು ಪಡೆದನು. ಸೆರಾಯನು ಶಿಲ್ಪಿಗರಾಗಿರುವ ಗೇಹರಾಷೀಮರ ಸ್ಥಾಪಕನಾದ ಯೋವಾಬನ ತಂದೆ. ಈ ಜನರು ಕೈಕೆಲಸದವರಾದ್ದರಿಂದ ಗೇಹರಾಷೀಮರು ಎಂಬ ಹೆಸರು ಬಂತು.</verse>
				<verse number="15">ಯೆಫುನ್ನೆಯ ಮಗನಾದ ಕಾಲೇಬನ ಪುತ್ರರು: ಈರು, ಏಲ, ನಾಮ್ ಎಂಬವರು; ಏಲನ ಮಗನು ಕೆನಜ್.</verse>
				<verse number="16">ಯೆಹಲ್ಲೆಲೇಲನ ಪುತ್ರರು: ಜೀಫನು, ಜಿಫಾಹನು, ತೀರ್ಯನು, ಅಸರೇಲನು.</verse>
				<verse number="17">ಎಜ್ರನ ಪುತ್ರರು: ಯೆತೆರ್, ಮೆರೆದ್, ಏಫೆರ್, ಯಾಲೋನ್ ಎಂಬವರು. ಮೇರದನ ಹೆಂಡತಿಯು ಅವನಿಗೆ ಮಿರ್ಯಾಮ್, ಶಮ್ಮಾಯ, ಎಷ್ಟೆಮೋವನ ತಂದೆ ಇಷ್ಬಾಹನನ್ನೂ ಹೆತ್ತಳು.</verse>
				<verse number="18">ಇವರು ಮೆರೆದನು ಮದುವೆಯಾದ ಫರೋಹನ ಮಗಳು ಬಿತ್ಯಳ ಮಕ್ಕಳು. ಇದಲ್ಲದೆ ಯೆಹೂದ್ಯಳಾದ ಅವನ ಇನ್ನೊಬ್ಬ ಹೆಂಡತಿ, ಗೆದೋರ್ಯನ ತಂದೆ ಯೆರೆದನನ್ನೂ, ಸೋಕೋವಿನ ತಂದೆ ಹೆಬೆರನನ್ನೂ, ಜಾನೋಹನ ತಂದೆ ಯೆಕೂತೀಯೇಲನನ್ನೂ ಹೆತ್ತಳು.</verse>
				<verse number="19">ಹೋದೀಯನು ನಹಮನ ಸಹೋದರಿಯನ್ನು ಮದುವೆಯಾದನು. ಇವರ ಸಂತತಿಯವರು ಕೆಯೀಲದಲ್ಲಿ ವಾಸಿಸಿದ ಗರ್ಮ್ಯ ಗೋತ್ರದ ಮತ್ತು ಎಷ್ಟೆಮೋವಾಬದಲ್ಲಿ ವಾಸಿಸಿದ ಮಾಕಾತ್ ಗೋತ್ರದ ಪೂರ್ವಜರು.</verse>
				<verse number="20">ಶೀಮೋನನ ಪುತ್ರರು: ಅಮ್ನೋನನು, ರಿನ್ನನು, ಬೆನ್ಹನಾನನು, ತಿಲೋನನು. ಇಷ್ಷೀಯನ ಸಂತತಿ: ಜೋಹೆತನು, ಬೆನ್ ಜೋಹೆತನು.</verse>
				<verse number="21">ಯೆಹೂದನ ಮಗ ಶೇಲಹನ ಪುತ್ರರು: ಲೇಕಾಹ್ಯನ ತಂದೆ ಏರನು, ಮಾರೇಷನ ತಂದೆ ಲದ್ದ; ಬೇತ್ ಅಷ್ಬೇಯ ಪಟ್ಟಣದಲ್ಲಿ ವಾಸಿಸಿದ ನೇಕಾರರ ಕುಟುಂಬಗಳವರು,</verse>
				<verse number="22">ಕೋಜೇಬದವರಾದ ಯೊಕೀಮ್ಯರೂ, ಯೋವಾಷನು, ಸಾರಾಫ ಮೋವಾಬ್ ಮತ್ತು ಯೆಷೂಬಿ ಲೆಹೇಮಿನಲ್ಲಿ ಅಧಿಕಾರವುಳ್ಳವರಾಗಿದ್ದರು. ಈ ದಾಖಲೆಗಳು ಪ್ರಾಚೀನ ಕಾಲದಿಂದ ಬಂದವು.</verse>
				<verse number="23">ಇವರೇ ನೆಟಾಯಿಮ್, ಗೆದೇರ ಎಂಬ ಸ್ಥಳಗಳಲ್ಲಿ ವಾಸವಾಗಿದ್ದ ಕುಂಬಾರರು. ಅವರು ಅಲ್ಲಿಯೇ ಇದ್ದು ಅರಸನಿಗೋಸ್ಕರ ಕೆಲಸ ಮಾಡುತ್ತಿದ್ದರು.</verse>
				<verse number="24">ಸಿಮೆಯೋನನ ವಂಶಜರು: ನೆಮೂಯೇಲನು, ಯಾಮೀನನು, ಯಾರೀಬನು, ಜೆರಹನು ಮತ್ತು ಸೌಲನು.</verse>
				<verse number="25">ಅವನ ಮಗನಾದ ಶಲ್ಲೂಮನು, ಅವನ ಮಗನಾದ ಮಿಬ್ಸಾಮನು, ಅವನ ಮಗನಾದ ಮಿಷ್ಮಾವನು.</verse>
				<verse number="26">ಮಿಷ್ಮಾವನ ವಂಶಜರು: ಅವನ ಮಗ ಹಮ್ಮೂಯೇಲನು, ಅವನ ಮಗ ಜಕ್ಕೂರನು, ಅವನ ಮಗನಾದ ಶಿಮ್ಮಿಯಿ.</verse>
				<verse number="27">ಶಿಮ್ಮಿಯಿಗೆ ಹದಿನಾರು ಮಂದಿ ಪುತ್ರರೂ, ಆರು ಮಂದಿ ಪುತ್ರಿಯರೂ ಇದ್ದರು. ಆದರೆ ಅವನ ಸಹೋದರರಿಗೆ ಬಹಳ ಮಕ್ಕಳಿರಲಿಲ್ಲ. ಅವರ ಸಮಸ್ತ ಸಂತತಿಯು ಯೆಹೂದದ ಮಕ್ಕಳ ಹಾಗೆ ಹೆಚ್ಚಾಗಿರಲಿಲ್ಲ.</verse>
				<verse number="28">ಇವರು ಬೇರ್ಷೆಬದಲ್ಲಿಯೂ; ಮೋಲಾದದಲ್ಲಿಯೂ; ಹಚರ್ ಷೂವಾಲ್ ಎಂಬಲ್ಲಿಯೂ;</verse>
				<verse number="29">ಬಿಲ್ಹದಲ್ಲಿಯೂ ಎಚೆಮಿನಲ್ಲಿಯೂ, ತೋಲಾದ್,</verse>
				<verse number="30">ಬೆತೂಯೇಲ್, ಹೊರ್ಮದಲ್ಲಿಯೂ; ಚಿಕ್ಲಗಿನಲ್ಲಿಯೂ;</verse>
				<verse number="31">ಬೇತ್ ಮರ್ಕಾಬೋತ್, ಹಚರ್ ಸೂಸೀಮ್, ಬೇತ್ ಬಿರೀ ಮತ್ತು ಶಾರಯಿಮ್‌ನಲ್ಲಿಯೂ ವಾಸವಾಗಿದ್ದರು. ದಾವೀದನ ಆಳ್ವಿಕೆಯವರೆಗೂ ಇವು ಅವರ ಪಟ್ಟಣಗಳಾಗಿದ್ದವು.</verse>
				<verse number="32">ಅವರ ಸುತ್ತಲಿನ ಗ್ರಾಮಗಳು ಯಾವುವೆಂದರೆ: ಏಟಾಮ್, ಆಯಿನ್, ರಿಮ್ಮೋನ್, ತೋಕೆನ್, ಆಷಾನ್ ಎಂಬ ಐದು ಪಟ್ಟಣಗಳು.</verse>
				<verse number="33">ಇದಲ್ಲದೆ ಆ ಪಟ್ಟಣಗಳ ಸುತ್ತಲಿದ್ದ ಊರುಗಳು ಬಾಳ್ ಪಟ್ಟಣದವರೆಗೆ ವಾಸವಾಗಿದ್ದರು. ಇವೇ ಅವರು ವಾಸವಾಗಿರುವ ಸ್ಥಳಗಳೂ, ಅವರ ವಂಶಾವಳಿಗಳೂ:</verse>
				<verse number="34">ಮೆಷೋಬಾಬನು, ಯಮ್ಲೇಕನು, ಅಮಚ್ಯನ ಮಗನಾದ ಯೋಷನು,</verse>
				<verse number="35">ಯೋಯೇಲನು, ಅಸಿಯೇಲನ ಮಗನಾದ ಸೆರಾಯನ ಮಗ ಯೊಷಿಬ್ಯನ ಮಗ ಯೇಹೂವು.</verse>
				<verse number="36">ಎಲ್ಯೋವೇನೈ, ಯಾಕೋಬ, ಯೆಷೋಹಾಯ, ಅಸಾಯ, ಅದೀಯೇಲ್, ಯೆಸೀಮಿಯೇಲ್, ಬೆನಾಯಾ.</verse>
				<verse number="37">ಶೆಮಾಯನ ಮಗ ಶಿಮ್ರಿಯ ಮಗ ಯೆದಾಯನ ಮಗ ಅಲ್ಲೋನನ ಮಗ ಶಿಪ್ಫಿಯ ಮಗ ಜೀಜನು.</verse>
				<verse number="38">ಹೆಸರು ಹೆಸರಾಗಿ ಬರೆಯಲಾದ ಇವರು ತಮ್ಮ ಕುಟುಂಬಗಳಲ್ಲಿ ನಾಯಕರಾಗಿದ್ದರು. ಅವರ ಪಿತೃಗಳ ಮನೆ ಬಹಳ ಅಭಿವೃದ್ಧಿಯಾಯಿತು.</verse>
				<verse number="39">ತಮ್ಮ ಮಂದೆಗಳಿಗೆ ಮೇವನ್ನು ಹುಡುಕಲು ತಗ್ಗಿನ ಪೂರ್ವದಿಕ್ಕಿನಲ್ಲಿರುವ ಗೆದೋರು ಎಂಬ ಸ್ಥಳದ ಪ್ರವೇಶದವರೆಗೂ ಹೋದರು.</verse>
				<verse number="40">ಅವರು ರಸವತ್ತಾದ ಒಳ್ಳೆಯ ಮೇವನ್ನು ಕಂಡುಕೊಂಡರು. ಆ ದೇಶವು ವಿಸ್ತಾರವಾಗಿಯೂ, ಶಾಂತವಾಗಿಯೂ, ಸಮಾಧಾನವಾಗಿಯೂ ಇತ್ತು. ಪೂರ್ವದಲ್ಲಿ ಹಾಮನ ವಂಶದವರು ಅಲ್ಲಿ ವಾಸವಾಗಿದ್ದರು.</verse>
				<verse number="41">ಹೆಸರು ಹೆಸರಾಗಿ ಬರೆದಿರುವವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಅಲ್ಲಿಗೆ ಹೋಗಿ ಹಾಮ್ಯರ ಡೇರೆಗಳನ್ನೂ ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಸಂಪೂರ್ಣವಾಗಿ ನಾಶಮಾಡಿದರು. ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವುದರಿಂದ ಇಂದಿನವರೆಗೂ ಅವರ ಸ್ಥಳದಲ್ಲಿ ವಾಸಿಸಿದರು.</verse>
				<verse number="42">ಇದಲ್ಲದೆ ಅವರಲ್ಲಿ ಸಿಮೆಯೋನನ ಪುತ್ರರಲ್ಲಿ ಐನೂರು ಮಂದಿ ಇಷ್ಷೀಯ ಪುತ್ರರಾದ ಪೆಲಟ್ಯ, ನೆಯರ್ಯ, ರೆಫಾಯ, ಉಜ್ಜೀಯೇಲ್ ಎಂಬವರನ್ನು ತಮ್ಮ ಅಧಿಪತಿಗಳಾಗಿ ಮಾಡಿಕೊಂಡು. ಸೇಯೀರ್ ಎಂಬ ಪರ್ವತ ದೇಶಕ್ಕೆ ಹೋದರು.</verse>
				<verse number="43">ಅವರು ತಪ್ಪಿಸಿಕೊಂಡ ಉಳಿದ ಅಮಾಲೇಕ್ಯರನ್ನು ಕೊಂದು, ಅಲ್ಲಿ ಇಂದಿನವರೆಗೂ ವಾಸವಾಗಿದ್ದಾರೆ.</verse>
			</chapter>
			<chapter number="5">
				<verse number="1">ಇಸ್ರಾಯೇಲಿನ ಚೊಚ್ಚಲಮಗನಾದ ರೂಬೇನನ ಪುತ್ರರು ಇವರು: ಅವನು ಚೊಚ್ಚಲ ಮಗನಾಗಿದ್ದನು. ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರ ಮಾಡಿದ್ದರಿಂದ ಅವನ ಚೊಚ್ಚಲುತನದ ಹಕ್ಕು ಇಸ್ರಾಯೇಲಿನ ಮಗ ಯೋಸೇಫನ ಪುತ್ರರಿಗೆ ಕೊಡಲಾಗಿತ್ತು. ಆದ್ದರಿಂದ ಈ ವಂಶಾವಳಿಯು ಚೊಚ್ಚಲುತನದ ಪ್ರಕಾರ ಬರೆದಿರುವುದಿಲ್ಲ.</verse>
				<verse number="2">ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲುತನವು ಯೋಸೇಫನದಾಗಿತ್ತು.</verse>
				<verse number="3">ಇಸ್ರಾಯೇಲಿನ ಚೊಚ್ಚಲ ಮಗ ರೂಬೇನನ ಪುತ್ರರು: ಹನೋಕ್, ಪಲ್ಲೂ, ಹೆಚ್ರೋನನು, ಕರ್ಮೀ.</verse>
				<verse number="4">ಯೋಯೇಲನ ವಂಶಜರು: ಅವನ ಮಗ ಶೆಮಾಯನು; ಅವನ ಮಗ ಗೋಗನು; ಅವನ ಮಗ ಶಿಮ್ಮೀಯಿ.</verse>
				<verse number="5">ಅವನ ಮಗ ಮೀಕಾಯನು; ಅವನ ಮಗ ರೆವಾಯನು, ಅವನ ಮಗ ಬಾಳನು.</verse>
				<verse number="6">ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸರಿನಿಂದ ಸೆರೆಯಾಗಿ ಒಯ್ದ ಅವನ ಮಗ ಬೇರನು; ಅವನೇ ರೂಬೇನ್ಯರಲ್ಲಿ ನಾಯಕನಾಗಿದ್ದನು.</verse>
				<verse number="7">ಇವನ ಸಹೋದರರು ತಮ್ಮ ಸಂತತಿಗಳಲ್ಲಿ ವಂಶಗಳ ವಂಶಾವಳಿಯನ್ನು ಲೆಕ್ಕಿಸಿದ ಅವನ ಮುಖ್ಯಸ್ಥರು ಯಾರೆಂದರೆ, ಯೆಹಿಯೇಲ್, ಜೆಕರ್ಯ,</verse>
				<verse number="8">ಅಜಾಜನ ಮಗನೂ ಶೆಮಯನ ಮಗನೂ ಯೋಯೇಲನ ಮಗನೂ ಆದ ಬೆಳ. ಇವರು ಅರೋಯೇರು ಮೊದಲ್ಗೊಂಡು ನೆಬೋ, ಬಾಳ್ ಮೆಯೋನ್ ಎಂಬ ಸ್ಥಳಗಳವರೆಗೂ ವಾಸವಾಗಿದ್ದರು.</verse>
				<verse number="9">ಗಿಲ್ಯಾದಿನ ದೇಶದಲ್ಲಿ ಅವನ ಪಶುಗಳು ಹೆಚ್ಚಾದುದರಿಂದ, ಅವನು ಪೂರ್ವದಿಕ್ಕಿನಲ್ಲಿ ಯೂಫ್ರೇಟೀಸ್ ನದಿ ಮೊದಲ್ಗೊಂಡು ಮರುಭೂಮಿಯ ಪ್ರದೇಶದವರೆಗೂ ವಾಸವಾಗಿದ್ದನು.</verse>
				<verse number="10">ಸೌಲನ ದಿವಸಗಳಲ್ಲಿ ರೂಬೇನ್ ವಂಶದವರು ಹಗ್ರೀಯರ ಸಂಗಡ ಯುದ್ಧಮಾಡಿ, ಅವರ ಕೈಯಲ್ಲಿ ಸೋತುಹೋದರು. ರೂಬೇನ್ ವಂಶದವರು ಗಿಲ್ಯಾದಿನ ಸಮಸ್ತ ಪೂರ್ವ ದಿಕ್ಕಿನಾದ್ಯಂತ ಹಗ್ರೀಯರ ವಾಸಸ್ಥಾನಗಳನ್ನು ಆಕ್ರಮಿಸಿಕೊಂಡರು.</verse>
				<verse number="11">ಗಾದನ ಮಕ್ಕಳು ಅವರಿಗೆದುರಾಗಿ ಬಾಷಾನ್ ದೇಶದಲ್ಲಿ ಸಲ್ಕದವರೆಗೂ ವಾಸವಾಗಿದ್ದರು.</verse>
				<verse number="12">ಬಾಷಾನಿನಲ್ಲಿ ಮುಖ್ಯನಾದವನು ಯೋಯೇಲನು, ಎರಡನೆಯವನು ಶಾಫಾಮನು, ಅನಂತರ ಯನ್ನೈ, ಶಾಫಾಟನು.</verse>
				<verse number="13">ಕುಟುಂಬಗಳಾಗಿ ಅವರ ಬಂಧುಗಳು: ಮೀಕಾಯೇಲನು, ಮೆಷುಲ್ಲಾಮನು, ಶೆಬನು, ಯೋರೈನು, ಯಕ್ಕಾನನು, ಜೀಯನು, ಏಬೆರನು; ಒಟ್ಟು ಏಳುಮಂದಿ.</verse>
				<verse number="14">ಇವರು ಹೂರಿಯ ಮಗ ಅಬೀಹೈಲನ ಪುತ್ರರು: ಈ ಹೂರೀಯು ಯಾರೋಹನ ಮಗನು, ಅವನು ಗಿಲ್ಯಾದನ ಮಗನು, ಅವನು ಮೀಕಾಯೇಲನ ಮಗನು, ಅವನು ಯೆಷೀಷೈಯನ ಮಗನು, ಅವನು ಯಹ್ದೋವಿನ ಮಗನು, ಅವನು ಬೂಜನ ಮಗನು.</verse>
				<verse number="15">ಅಬ್ದಿಯೇಲನ ಮಗನೂ ಗೂನೀಯ ಮೊಮ್ಮಗನೂ ಆದ ಅಹೀಯು ಈ ಗೋತ್ರದ ಮುಖ್ಯಸ್ಥನು.</verse>
				<verse number="16">ಅವರು ಗಿಲ್ಯಾದಿನಲ್ಲಿರುವ ಬಾಷಾನಿನಲ್ಲಿಯೂ, ಅವರ ಊರುಗಳಲ್ಲಿಯೂ, ಅದರ ಮೇರೆಯಲ್ಲಿರುವ ಶಾರೋನಿನ ಸಮಸ್ತ ಉಪನಗರಗಳಲ್ಲಿಯೂ ವಾಸವಾಗಿದ್ದರು.</verse>
				<verse number="17">ಇವರೆಲ್ಲರು ಯೆಹೂದದ ಅರಸನಾದ ಯೋತಾಮನ ದಿವಸಗಳಲ್ಲಿಯೂ, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನ ದಿವಸಗಳಲ್ಲಿಯೂ ವಂಶಾವಳಿಯ ಪಟ್ಟಿಯಲ್ಲಿ ಲಿಖಿತರಾದರು.</verse>
				<verse number="18">ರೂಬೇನ್ಯರಲ್ಲಿಯೂ, ಗಾದ್ಯರಲ್ಲಿಯೂ, ಮನಸ್ಸೆಯ ಅರ್ಧ ಗೋತ್ರದಲ್ಲಿಯೂ, ಗುರಾಣಿಯನ್ನೂ, ಖಡ್ಗವನ್ನೂ ಹಿಡಿಯುವುದಕ್ಕೆ ಬಿಲ್ಲೆಸೆಯುವುದಕ್ಕೆ ಯುದ್ಧದಲ್ಲಿ ಪ್ರವೀಣರಾದ ಪರಾಕ್ರಮಶಾಲಿಗಳಾದ ಯುದ್ಧಕ್ಕೆ ಹೊರಡುವವರು 44,760 ಮಂದಿಯಾಗಿದ್ದರು.</verse>
				<verse number="19">ಇವರು ಹಗ್ರೀಯರಾದ ಯೆಟೂರನು, ನಾಫೀಷನು, ನೊದಾಬನು ಎಂಬವರ ವಿರುದ್ಧ ಯುದ್ಧಮಾಡಿದರು.</verse>
				<verse number="20">ಇವರು ಅವರಿಗೆ ವಿರೋಧವಾಗಿ ಸಹಾಯ ಹೊಂದಿದ್ದರಿಂದ, ಹಗ್ರೀಯರೂ, ಅವರ ಸಂಗಡ ಕೂಡಿದ್ದವರೆಲ್ಲರೂ ಇವರ ಕೈವಶವಾದರು. ಅವರು ಯುದ್ಧದಲ್ಲಿ ದೇವರಿಗೆ ಮೊರೆಯಿಟ್ಟು, ಅವರಲ್ಲಿ ಭರವಸೆ ಇಟ್ಟಿದ್ದರಿಂದ, ದೇವರು ಅವರ ಮನವಿಯನ್ನು ಕೇಳಿದರು.</verse>
				<verse number="21">ಅವರು ವೈರಿಗಳಿಂದ ಎಲ್ಲಾ ಪಶುಗಳನ್ನು ಅವರು ತಮ್ಮ ವಶಕ್ಕೆ ತೆಗೆದುಕೊಂಡರು. ಐವತ್ತು ಸಾವಿರ ಒಂಟೆಗಳನ್ನು, ಎರಡು ಲಕ್ಷದ ಐವತ್ತು ಸಾವಿರ ಕುರಿಗಳನ್ನು, ಎರಡು ಸಾವಿರ ಕತ್ತೆಗಳನ್ನು ಅಲ್ಲದೆ, ಒಂದು ಲಕ್ಷ ಜನರನ್ನು ಯುದ್ಧ ಕೈದಿಗಳನ್ನಾಗಿ ಸೆರೆಹಿಡಿದರು.</verse>
				<verse number="22">ಏಕೆಂದರೆ ಯುದ್ಧವು ದೇವರಿಂದ ಉಂಟಾದ ಕಾರಣ, ಅನೇಕ ಜನರು ಹತರಾದರು. ಇವರು ಸೆರೆಯಾಗಿ ಹೋಗುವ ಕಾಲದವರೆಗೂ ಅವರ ಸ್ಥಳದಲ್ಲಿ ವಾಸವಾಗಿದ್ದರು.</verse>
				<verse number="23">ಮನಸ್ಸೆಯ ಅರ್ಧ ಗೋತ್ರದ ಜನರು ದೇಶದಲ್ಲಿ ವಾಸಮಾಡಿ, ಬಾಷಾನ್ ಮೊದಲುಗೊಂಡು ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಬೆಟ್ಟದವರೆಗೂ ಹಬ್ಬಿಕೊಂಡರು.</verse>
				<verse number="24">ಅವರ ಪಿತೃಗಳ ಮನೆಯಲ್ಲಿರುವ ಯಜಮಾನರು ಯಾರೆಂದರೆ: ಏಫೆರ್, ಇಷ್ಷೀ, ಎಲೀಯೇಲ್, ಅಜ್ರಿಯೇಲ್, ಯೆರೆಮೀಯ, ಹೋದವ್ಯ, ಯೆಹ್ತೀಯೇಲ್. ಇವರು ಪರಾಕ್ರಮಶಾಲಿಗಳಾಗಿಯೂ, ಹೆಸರುಗೊಂಡವರಾಗಿಯೂ, ತಮ್ಮ ಪಿತೃಗಳ ಮನೆಯಲ್ಲಿ ಯಜಮಾನರಾಗಿಯೂ ಇದ್ದರು.</verse>
				<verse number="25">ಆದರೆ ಅವರು ತಮ್ಮ ಪಿತೃಗಳ ದೇವರಿಗೆ ದ್ರೋಹಿಗಳಾಗಿದ್ದರು. ದೇವರು ತಮ್ಮ ಮುಂದೆ ನಾಶಮಾಡಿದ ಆ ದೇಶದ ಜನರ ದೇವರುಗಳ ಹಿಂದೆ ಜಾರರಾಗಿ ಹೋದರು.</verse>
				<verse number="26">ಆದಕಾರಣ ಇಸ್ರಾಯೇಲಿನ ದೇವರು ಅಸ್ಸೀರಿಯದ ಅರಸನಾದ ಪೂಲನ ಆತ್ಮವನ್ನೂ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸರನ ಆತ್ಮವನ್ನೂ ಪ್ರೇರಿಸಿದ್ದರಿಂದ, ಅವರು ಅವರನ್ನು ಸೆರೆಯಾಗಿ ಒಯ್ದರು. ಆ ರೂಬೇನ್ಯರನ್ನೂ, ಗಾದ್ಯರನ್ನೂ, ಮನಸ್ಸೆಯ ಅರ್ಧ ಗೋತ್ರದವರನ್ನೂ ಹಲಹ, ಹಾಬೋರ್, ಹಾರ, ಎಂಬ ಪ್ರಾಂತಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ತೆಗೆದುಕೊಂಡು ಹೋದರು. ಅವರು ಇಂದಿನವರೆಗೂ ಅಲ್ಲಿಯೇ ಇದ್ದಾರೆ.</verse>
			</chapter>
			<chapter number="6">
				<verse number="1">ಲೇವಿಯ ಪುತ್ರರು: ಗೇರ್ಷೋನ್, ಕೊಹಾತ್, ಮೆರಾರೀ.</verse>
				<verse number="2">ಕೊಹಾತನ ಪುತ್ರರು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲನು.</verse>
				<verse number="3">ಅಮ್ರಾಮನ ಪುತ್ರರು: ಆರೋನನು, ಮೋಶೆಯು, ಮಿರ್ಯಾಮಳು. ಆರೋನನ ಪುತ್ರರು: ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್.</verse>
				<verse number="4">ಎಲಿಯಾಜರನು ಫೀನೆಹಾಸನನ್ನು ಪಡೆದನು, ಫೀನೆಹಾಸನು ಅಬೀಷೂವನನ್ನು ಪಡೆದನು,</verse>
				<verse number="5">ಅಬೀಷೂವನು ಬುಕ್ಕೀಯನನ್ನು ಪಡೆದನು, ಬುಕ್ಕೀಯನು ಉಜ್ಜೀಯನನ್ನು ಪಡೆದನು,</verse>
				<verse number="6">ಉಜ್ಜೀಯನು ಜೆರಹ್ಯನನ್ನು ಪಡೆದನು, ಜೆರಹ್ಯನು ಮೆರಾಯೋತನನ್ನು ಪಡೆದನು,</verse>
				<verse number="7">ಮೆರಾಯೋತನು ಅಮರ್ಯನನ್ನು ಪಡೆದನು, ಅಮರ್ಯನು ಅಹೀಟೂಬನನ್ನು ಪಡೆದನು,</verse>
				<verse number="8">ಅಹೀಟೂಬನು ಚಾದೋಕನನ್ನು ಪಡೆದನು, ಚಾದೋಕನು ಅಹೀಮಾಚನನ್ನು ಪಡೆದನು,</verse>
				<verse number="9">ಅಹೀಮಾಚನು ಅಜರ್ಯನನ್ನು ಪಡೆದನು, ಅಜರ್ಯನು ಯೋಹಾನಾನನನ್ನು ಪಡೆದನು;</verse>
				<verse number="10">ಯೋಹಾನಾನನು ಅಜರ್ಯನನ್ನು ಪಡೆದನು. ಅಜರ್ಯನು ಯೆರೂಸಲೇಮಿನಲ್ಲಿ ಸೊಲೊಮೋನನು ಕಟ್ಟಿಸಿದ ದೇವಾಲಯದೊಳಗೆ ಯಾಜಕ ಸೇವೆ ಮಾಡುತ್ತಿದ್ದವನು.</verse>
				<verse number="11">ಅಜರ್ಯನು ಅಮರ್ಯನನ್ನು ಪಡೆದನು, ಅಮರ್ಯನು ಅಹೀಟೂಬನನ್ನು ಪಡೆದನು,</verse>
				<verse number="12">ಅಹೀಟೂಬನು ಚಾದೋಕನನ್ನು ಪಡೆದನು, ಚಾದೋಕನು ಶಲ್ಲೂಮನನ್ನು ಪಡೆದನು,</verse>
				<verse number="13">ಶಲ್ಲೂಮನು ಹಿಲ್ಕೀಯನನ್ನು ಪಡೆದನು, ಹಿಲ್ಕೀಯನು ಅಜರ್ಯನನ್ನು ಪಡೆದನು,</verse>
				<verse number="14">ಅಜರ್ಯನು ಸೆರಾಯನನ್ನು ಪಡೆದನು, ಸೆರಾಯನು ಯೆಹೋಚಾದಾಕನನ್ನು ಪಡೆದನು,</verse>
				<verse number="15">ಯೆಹೋವ ದೇವರು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ, ಯೆರೂಸಲೇಮಿನವರನ್ನು ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.</verse>
				<verse number="16">ಲೇವಿಯ ಪುತ್ರರು: ಗೇರ್ಷೋಮ್, ಕೊಹಾತ್, ಮೆರಾರೀ ಎಂಬುವರು.</verse>
				<verse number="17">ಗೇರ್ಷೋಮನ ಪುತ್ರರ ಹೆಸರುಗಳು: ಲಿಬ್ನೀ, ಶಿಮ್ಮೀ.</verse>
				<verse number="18">ಕೊಹಾತನ ಪುತ್ರರು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್.</verse>
				<verse number="19">ಮೆರಾರೀಯ ಪುತ್ರರು: ಮಹ್ಲೀ, ಮೂಷೀ. ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರವಾಗಿ:</verse>
				<verse number="20">ಗೇರ್ಷೋಮಿನವರು: ಅವನ ಮಗ ಲಿಬ್ನೀ, ಅವನ ಮಗ ಯಹತ್, ಅವನ ಮಗ ಜಿಮ್ಮ,</verse>
				<verse number="21">ಅವನ ಮಗ ಯೋವಾಹ, ಅವನ ಮಗ ಇದ್ದೋ, ಅವನ ಮಗನಾದ ಜೆರಹ, ಅವನ ಮಗ ಯೆವತ್ರೈ.</verse>
				<verse number="22">ಕೊಹಾತನ ಪುತ್ರರು: ಅವನ ಮಗ ಅಮ್ಮೀನಾದಾಬ್, ಅವನ ಮಗ ಕೋರಹ, ಅವನ ಮಗ ಅಸ್ಸೀರ್,</verse>
				<verse number="23">ಅವನ ಮಗ ಎಲ್ಕಾನಾ, ಅವನ ಮಗ ಎಬ್ಯಾಸಾಫ್, ಅವನ ಮಗ ಅಸ್ಸೀರ್,</verse>
				<verse number="24">ಅವನ ಮಗ ತಹತ್, ಅವನ ಮಗ ಉರೀಯೇಲ್, ಅವನ ಮಗ ಉಜ್ಜೀಯ, ಅವನ ಮಗ ಸೌಲ್.</verse>
				<verse number="25">ಎಲ್ಕಾನನ ವಂಶಜರು: ಅಮಾಸೈ, ಅಹಿಮೋತ್,</verse>
				<verse number="26">ಅವನ ಮಗ ಎಲ್ಕಾನ, ಅವನ ಮಗ ಚೋಫೈ, ಅವನ ಮಗ ನಹತ್,</verse>
				<verse number="27">ಅವನ ಮಗ ಎಲೀಯಾಬ್, ಅವನ ಮಗ ಯೆರೋಹಾಮ್, ಅವನ ಮಗ ಎಲ್ಕಾನ, ಅವನ ಮಗ ಸಮುಯೇಲ್.</verse>
				<verse number="28">ಸಮುಯೇಲನ ಪುತ್ರರು: ಚೊಚ್ಚಲ ಮಗ ವಷ್ಣಿ ಎಂಬ ಯೋಯೇಲ್ ಮತ್ತು ಎರಡನೆಯ ಮಗ ಅಬೀಯ.</verse>
				<verse number="29">ಮೆರಾರೀಯ ವಂಶಜರು: ಮಹ್ಲೀ, ಅವನ ಮಗ ಲಿಬ್ನೀ, ಅವನ ಮಗ ಶಿಮ್ಮಿ; ಅವನ ಮಗ ಉಜ್ಜ,</verse>
				<verse number="30">ಅವನ ಮಗ ಶಿಮ್ಮಾ, ಅವನ ಮಗ ಹಗ್ಗೀಯ, ಅವನ ಮಗ ಅಸಾಯ.</verse>
				<verse number="31">ಮಂಜೂಷವನ್ನು ನೆಲೆಗೊಳಿಸಿದ ತರುವಾಯ ದಾವೀದನು ಯೆಹೋವ ದೇವರ ಮನೆಯಲ್ಲಿ ವಾದ್ಯಗಾರರನ್ನು ನೇಮಿಸಿದನು.</verse>
				<verse number="32">ಸೊಲೊಮೋನನು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯವನ್ನು ಕಟ್ಟುವವರೆಗೆ, ಈ ವಾದ್ಯಗಾರರು ಸಭೆಯ ಗುಡಾರದ ನಿವಾಸದ ಮುಂದೆ ಸೇವಿಸುತ್ತಾ ಇದ್ದರು. ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು.</verse>
				<verse number="33">ಸೇವೆಗೆ ಆಯ್ಕೆಯಾದ ವ್ಯಕ್ತಿಗಳು ಮತ್ತು ಅವರ ಪುತ್ರರ ಹೆಸರುಗಳು ಹೀಗಿವೆ: ಕೊಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಅವನು ಯೋಯೇಲನ ಮಗನು, ಅವನು ಸಮುಯೇಲನ ಮಗನು,</verse>
				<verse number="34">ಅವನು ಎಲ್ಕಾನನ ಮಗನು, ಅವನು ಯೆರೋಹಾಮನ ಮಗನು, ಅವನು ಎಲೀಯೇಲನ ಮಗನು, ಅವನು ತೋಹನ ಮಗನು,</verse>
				<verse number="35">ಅವನು ಚೂಫನ ಮಗನು, ಅವನು ಎಲ್ಕಾನನ ಮಗನು, ಅವನು ಮಹತನ ಮಗನು, ಅವನು ಅಮಾಸೈಯ ಮಗನು,</verse>
				<verse number="36">ಅವನು ಎಲ್ಕಾನನ ಮಗನು, ಅವನು ಯೋಯೇಲನ ಮಗನು, ಅವನು ಅಜರ್ಯನ ಮಗನು, ಅವನು ಚೆಫನ್ಯನ ಮಗನು,</verse>
				<verse number="37">ಅವನು ತಹತನ ಮಗನು, ಅವನು ಅಸ್ಸೀರನ ಮಗನು, ಅವನು ಎಬ್ಯಾಸಾಫನ ಮಗನು, ಅವನು ಕೋರಹನ ಮಗನು,</verse>
				<verse number="38">ಅವನು ಇಚ್ಹಾರನ ಮಗನು, ಅವನು ಕೊಹಾತನ ಮಗನು, ಅವನು ಲೇವಿಯನ ಮಗನು, ಅವನು ಇಸ್ರಾಯೇಲನ ಮಗನು.</verse>
				<verse number="39">ಹೇಮಾನನ ಬಲಗಡೆಯಲ್ಲಿ ನಿಲ್ಲುತ್ತಿದ್ದ ಅವನ ಸಹೋದರನಾದ ಆಸಾಫನು ಜೊತೆಸೇವಕನಾಗಿದ್ದನು. ಈ ಆಸಾಫನು ಬೆರೆಕ್ಯನ ಮಗನು, ಅವನು ಶಿಮ್ಮನ ಮಗನು.</verse>
				<verse number="40">ಅವನು ಮೀಕಾಯೇಲನ ಮಗನು, ಅವನು ಬಾಸೇಯನ ಮಗನು, ಅವನು ಮಲ್ಕೀಯನ ಮಗನು,</verse>
				<verse number="41">ಅವನು ಎತ್ನಿಯ ಮಗನು, ಅವನು ಜೆರಹನ ಮಗನು, ಅವನು ಅದಾಯನ ಮಗನು,</verse>
				<verse number="42">ಅವನು ಏತಾನನ ಮಗನು, ಅವನು ಜಿಮ್ಮನ ಮಗನು, ಅವನು ಶಿಮ್ಮಿಯ ಮಗನು,</verse>
				<verse number="43">ಅವನು ಯಹತನ ಮಗನು, ಅವನು ಗೇರ್ಷೋಮನ ಮಗನು, ಅವನು ಲೇವಿಯ ಮಗನು.</verse>
				<verse number="44">ಅವರ ಸಹೋದ್ಯೋಗಿ ಮೆರಾರೀಯ ಪುತ್ರರು ಎಡಗಡೆಯಲ್ಲಿ ನಿಂತಿದ್ದರು. ಏತಾನನು ಕೀಷೀಯ ಮಗನು, ಅವನು ಅಬ್ದೀಯ ಮಗನು, ಅವನು ಮಲ್ಲೂಕನ ಮಗನು,</verse>
				<verse number="45">ಅವನು ಹಷಬ್ಯನ ಮಗನು, ಅವನು ಅಮಚ್ಯನ ಮಗನು, ಅವನು ಹಿಲ್ಕೀಯನ ಮಗನು,</verse>
				<verse number="46">ಅವನು ಅಮ್ಚೀಯ ಮಗನು, ಅವನು ಬಾನೀಯ ಮಗನು, ಅವನು ಶೆಮೆರನ ಮಗನು,</verse>
				<verse number="47">ಅವನು ಮಹ್ಲೀಯ ಮಗನು, ಅವನು ಮೂಷೀಯ ಮಗನು, ಅವನು ಮೆರಾರೀಯ ಮಗನು, ಅವನು ಲೇವಿಯ ಮಗನು.</verse>
				<verse number="48">ಅವರ ಸಹೋದರರಾದ ಇತರ ಲೇವಿಯರು ದೇವರ ಮನೆಯ ಗುಡಾರದ ಸಮಸ್ತ ಸೇವೆಗೆ ನೇಮಕವಾಗಿದ್ದರು.</verse>
				<verse number="49">ಆದರೆ ಆರೋನನೂ, ಅವನ ಪುತ್ರರೂ ದಹನಬಲಿಯ ಪೀಠದ ಮೇಲೆಯೂ, ಧೂಪವನ್ನು ಪೀಠದ ಮೇಲೆಯೂ ಅರ್ಪಿಸುತ್ತಿದ್ದರು. ದೇವರ ಸೇವಕನಾದ ಮೋಶೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಅವರು ಮಹಾಪರಿಶುದ್ಧ ಸ್ಥಳದ ಸಮಸ್ತ ಕಾರ್ಯಕ್ಕೂ, ಇಸ್ರಾಯೇಲಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೂ ನೇಮಕವಾಗಿದ್ದರು.</verse>
				<verse number="50">ಆರೋನನ ವಂಶಜರು: ಅವನ ಮಗನು ಎಲಿಯಾಜರನು, ಅವನ ಮಗನು ಫೀನೆಹಾಸನು, ಅವನ ಮಗನು ಅಬೀಷೂವನು,</verse>
				<verse number="51">ಅವನ ಮಗನು ಬುಕ್ಕೀಯು, ಅವನ ಮಗನು ಉಜ್ಜೀ, ಅವನ ಮಗನು ಜೆರಹ್ಯಾಹನು,</verse>
				<verse number="52">ಅವನ ಮಗನು ಮೆರಾಯೋತನು, ಅವನ ಮಗನು ಅಮರ್ಯನು, ಅವನ ಮಗನು ಅಹೀಟೂಬನು,</verse>
				<verse number="53">ಅವನ ಮಗನು ಚಾದೋಕನು, ಅವನ ಮಗನು ಅಹೀಮಾಚನು.</verse>
				<verse number="54">ಕೊಹಾತನ ಗೋತ್ರದ ಆರೋನನ ವಂಶಜರಿಗೆ ನೇಮಕವಾದ ಪ್ರಾಂತ್ಯ ಇದು: ಅವರಿಗೆಂದು ಪ್ರತ್ಯೇಕಿಸಿದ ಪ್ರದೇಶದ ಪ್ರಥಮ ಚೀಟಿನ ಪಾಲನ್ನು ಅವರು ಪಡೆದುಕೊಂಡರು.</verse>
				<verse number="55">ಅವು ಯಾವುವೆಂದರೆ: ಕೊಹಾತ್ಯರ ಕುಟುಂಬಗಳಿಗೆ ಚೀಟು ಬಿದ್ದ ಪ್ರಕಾರ, ಯೆಹೂದ ದೇಶದಲ್ಲಿ ಹೆಬ್ರೋನ್ ಪಟ್ಟಣವೂ, ಅದರ ಸುತ್ತಲಿರುವ ಗೋಮಾಳಗಳೂ ಅವರಿಗೆ ದೊರೆತವು.</verse>
				<verse number="56">ಆದರೆ ಆ ಪಟ್ಟಣದ ಹೊಲಗಳನ್ನೂ, ಅದರ ಗ್ರಾಮಗಳನ್ನೂ, ಯೆಫುನ್ನೆಯ ಮಗ ಕಾಲೇಬನಿಗೆ ಕೊಟ್ಟರು.</verse>
				<verse number="57">ಯೆಹೂದದ ಕುಲಗಳಲ್ಲಿ ಆರೋನನ ಪುತ್ರರಿಗೆ ಕೊಟ್ಟ ಪಟ್ಟಣಗಳು ಯಾವುವೆಂದರೆ: ಆಶ್ರಯ ನಗರವಾದ ಹೆಬ್ರೋನ್, ಲಿಬ್ನವೂ, ಯತ್ತೀರೂ, ಎಷ್ಟೆಮೋವವೂ, ಅವುಗಳ ಉಪನಗರಗಳೂ;</verse>
				<verse number="58">ಹೀಲೇನ್, ದೆಬೀರ್,</verse>
				<verse number="59">ಆಷಾನ್, ಯುತಾಹ ಮತ್ತು ಬೇತ್ ಷೆಮೆಷ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು.</verse>
				<verse number="60">ಬೆನ್ಯಾಮೀನನ ಗೋತ್ರದಿಂದ ಕೊಟ್ಟವುಗಳು, ಗಿಬ್ಯೋನ್, ಗೆಬಾ, ಆಲೆಮೆತೂ, ಅನಾತೋತೂ, ಅದರ ಗೋಮಾಳುಗಳು. ಇವರ ಕುಟುಂಬಗಳಿಗೆ ದೊರಕಿದ ಎಲ್ಲಾ ಪಟ್ಟಣಗಳು ಹದಿಮೂರು.</verse>
				<verse number="61">ಆ ಗೋತ್ರದ ಕುಟುಂಬಗಳಲ್ಲಿ ಉಳಿದ ಕೊಹಾತನ ಪುತ್ರರಿಗೂ ಚೀಟುಹಾಕಿ ಮನಸ್ಸೆಯ ಅರ್ಧ ಗೋತ್ರದಿಂದ ಹತ್ತು ಪಟ್ಟಣಗಳು ದೊರೆತವು.</verse>
				<verse number="62">ಗೇರ್ಷೋಮನ ಪುತ್ರರಿಗೆ ತಮ್ಮ ಕುಟುಂಬಗಳ ಪ್ರಕಾರವೇ ಇಸ್ಸಾಕಾರನ ಗೋತ್ರದಿಂದಲೂ, ಆಶೇರನ ಗೋತ್ರದಿಂದಲೂ, ನಫ್ತಾಲಿಯ ಗೋತ್ರದಿಂದಲೂ, ಬಾಷಾನಿನಲ್ಲಿರುವ ಮನಸ್ಸೆಯ ಗೋತ್ರದಿಂದಲೂ ಹದಿಮೂರು ಪಟ್ಟಣಗಳು ದೊರಕಿದ್ದವು.</verse>
				<verse number="63">ಮೆರಾರೀಯ ಪುತ್ರರಿಗೂ ಅವರ ಕುಟುಂಬಗಳ ಪ್ರಕಾರ ಚೀಟುಹಾಕಿ, ರೂಬೇನನ ಗೋತ್ರದಿಂದಲೂ, ಗಾದನ ಗೋತ್ರದಿಂದಲೂ, ಜೆಬುಲೂನನ ಗೋತ್ರದಿಂದಲೂ ಹನ್ನೆರಡು ಪಟ್ಟಣಗಳು ದೊರಕಿದ್ದವು.</verse>
				<verse number="64">ಇಸ್ರಾಯೇಲರು ಲೇವಿಯರಿಗೆ ಈ ಪಟ್ಟಣಗಳನ್ನೂ, ಅವುಗಳ ಉಪನಗರಗಳನ್ನೂ ಕೂಡಾ ಕೊಟ್ಟರು.</verse>
				<verse number="65">ಅವರು ಚೀಟುಹಾಕಿ ಯೆಹೂದ ಸಿಮೆಯೋನ್ ಬೆನ್ಯಾಮೀನ್ ಕುಲಗಳಿಂದ ಮೇಲೆ ಹೆಸರು ಹೇಳಿದ ಪಟ್ಟಣಗಳನ್ನು ಕೊಟ್ಟರು.</verse>
				<verse number="66">ಕೊಹಾತನ ಪುತ್ರರ ಮಿಕ್ಕಾದ ಕುಟುಂಬಗಳಿಗೂ, ಅವರ ಮೇರೆಗಳಲ್ಲಿ ಎಫ್ರಾಯೀಮನ ಗೋತ್ರದೊಳಗೆ ಪಟ್ಟಣಗಳು ದೊರೆತಿದ್ದವು.</verse>
				<verse number="67">ಇದಲ್ಲದೆ ಎಫ್ರಾಯೀಮ್ ಬೆಟ್ಟದಲ್ಲಿರುವ ಶೆಕೆಮ್ ಎಂಬ ಆಶ್ರಯ ನಗರ, ಗೆಜೆರ್ ಮತ್ತು ಅದರ ಉಪನಗರಗಳನ್ನೂ,</verse>
				<verse number="68">ಯೊಕ್ಮೆಯಾಮನ್ನೂ, ಬೇತ್ ಹೋರೋನ್,</verse>
				<verse number="69">ಅಯ್ಯಾಲೋನ್, ಗತ್ ರಿಮ್ಮೋನನ್ನೂ, ಅದರ ಉಪನಗರಗಳನ್ನೂ ಕೊಟ್ಟರು.</verse>
				<verse number="70">ಇದಲ್ಲದೆ ಕೊಹಾತನ ಪುತ್ರರ ಮಿಕ್ಕಾದ ಕುಟುಂಬಕ್ಕೋಸ್ಕರ ಮನಸ್ಸೆಯ ಅರ್ಧ ಗೋತ್ರದಿಂದ ಆನೇರನ್ನೂ, ಅದರ ಉಪನಗರಗಳನ್ನೂ; ಬಿಳ್ಳಾಮ್ ಉಪನಗರಗಳನ್ನೂ ಕೊಟ್ಟರು.</verse>
				<verse number="71">ಮನಸ್ಸೆಯ ಅರ್ಧ ಗೋತ್ರದಿಂದ ಗೇರ್ಷೋಮನ ಪುತ್ರರಿಗೆ ಬಾಷಾನಿನಲ್ಲಿರುವ ಗೋಲಾನೂ, ಅದರ ಉಪನಗರಗಳನ್ನೂ; ಅಷ್ಟಾರೋತ್ ಅದರ ಉಪನಗರಗಳನ್ನೂ;</verse>
				<verse number="72">ಇಸ್ಸಾಕಾರನ ಗೋತ್ರದಿಂದ ಕೆದೆಷ್, ಅದರ ಉಪನಗರಗಳನ್ನೂ; ದಾಬೆರತ್ ಅದರ ಉಪನಗರಗಳನ್ನೂ;</verse>
				<verse number="73">ರಾಮೋತ್ ಅದರ ಉಪನಗರಗಳನ್ನೂ; ಅನೇಮ್, ಅದರ ಉಪನಗರಗಳನ್ನೂ;</verse>
				<verse number="74">ಆಶೇರನ ಗೋತ್ರದಿಂದ ಮಷಾಲ್, ಅಬ್ದೋನ್</verse>
				<verse number="75">ಹೂಕೋಕ್, ಅದರ ಉಪನಗರಗಳನ್ನೂ; ರೆಹೋಬ್, ಅದರ ಉಪನಗರಗಳನ್ನೂ;</verse>
				<verse number="76">ನಫ್ತಾಲಿ ಗೋತ್ರದಿಂದ ಗಲಿಲಾಯದಲ್ಲಿರುವ ಕೆದೆಷ್, ಅದರ ಉಪನಗರಗಳನ್ನೂ; ಹಮ್ಮೋನ್, ಅದರ ಉಪನಗರಗಳನ್ನೂ; ಕಿರ್ಯಾತಯಿಮ್, ಅದರ ಉಪನಗರಗಳೂ ದೊರಕಿದ್ದವು.</verse>
				<verse number="77">ಮೆರಾರೀಯ ಉಳಿದ ಮಕ್ಕಳಿಗೂ, ಜೆಬುಲೂನನ ಗೋತ್ರದಿಂದ ರಿಮ್ಮೋನೋ, ಅದರ ಉಪನಗರಗಳೂ, ತಾಬೋರ್, ಅದರ ಉಪನಗರಗಳೂ;</verse>
				<verse number="78">ರೂಬೇನನ ಗೋತ್ರದಿಂದ ಯೆರಿಕೋವಿನ ಬಳಿಯಲ್ಲಿ ಯೊರ್ದನ್ ನದಿಯ ಪೂರ್ವದಿಕ್ಕಿನ ಮರುಭೂಮಿಯಲ್ಲಿರುವ ಬೆಚೆರ್, ಅದರ ಉಪನಗರಗಳೂ; ಯಹಚ, ಅದರ ಉಪನಗರಗಳೂ;</verse>
				<verse number="79">ಕೆದೇಮೋತ್, ಮೇಫಾತ್ ಅದರ ಉಪನಗರಗಳೂ;</verse>
				<verse number="80">ಗಾದನ ಗೋತ್ರದಿಂದ ಗಿಲ್ಯಾದಿನ ರಾಮೋತ್, ಅದರ ಉಪನಗರಗಳೂ; ಮಹನಯಿಮ್ ಅದರ ಉಪನಗರಗಳೂ;</verse>
				<verse number="81">ಹೆಷ್ಬೋನ್, ಯಜ್ಜೇರ್ ಮತ್ತು ಅದರ ಉಪನಗರಗಳೂ ದೊರೆತವು.</verse>
			</chapter>
			<chapter number="7">
				<verse number="1">ಇಸ್ಸಾಕಾರನ ಪುತ್ರರು: ತೋಲ, ಪೂವ, ಯಾಶೂಬ್, ಶಿಮ್ರೋನ್ ಎಂಬ ನಾಲ್ಕು ಮಂದಿ.</verse>
				<verse number="2">ತೋಲನ ಪುತ್ರರು: ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್ ಮತ್ತು ಸಮುಯೇಲ್. ಇವರು ತಮ್ಮ ಕುಟುಂಬಗಳಿಗೆ ಯಜಮಾನರಾಗಿದ್ದರು. ಇವರು ತಮ್ಮ ವಂಶಗಳಲ್ಲಿ ಯುದ್ಧದಲ್ಲಿ ಪರಾಕ್ರಮಶಾಲಿಗಳಾಗಿದ್ದರು. ದಾವೀದನ ದಿವಸಗಳಲ್ಲಿ ಅವರ ಲೆಕ್ಕ 22,600 ಮಂದಿ ಆಗಿತ್ತು.</verse>
				<verse number="3">ಉಜ್ಜೀಯನ ಪುತ್ರನು ಇಜರಾಹಿಯಾ. ಇಜರಾಹಿಯಾನ ಪುತ್ರರು: ಮೀಕಾಯೇಲ್, ಓಬದ್ಯ, ಯೋಯೇಲ್ ಮತ್ತು ಇಷೀಯ ಈ ಐದು ಮಂದಿಯೂ ಮುಖ್ಯಸ್ಥರಾಗಿದ್ದರು.</verse>
				<verse number="4">ಇವರ ಸಂಗಡ ಅವರ ವಂಶಗಳ ಪ್ರಕಾರವೂ, ಅವರ ಪಿತೃಗಳ ಮನೆಯ ಪ್ರಕಾರವೂ ಯುದ್ಧಕ್ಕೋಸ್ಕರ 36,000 ಮಂದಿ ಯುದ್ಧವೀರರ ಗುಂಪುಗಳಿದ್ದವು. ಏಕೆಂದರೆ ಅವರ ಹೆಂಡತಿಯರು, ಮಕ್ಕಳು ಬಹಳ ಮಂದಿ ಇದ್ದರು.</verse>
				<verse number="5">ಇಸ್ಸಾಕಾರನ ಕುಟುಂಬಗಳಾಗಿರುವ ಸಹೋದರರೊಳಗೆ ಅವರ ವಂಶಾವಳಿಗಳಲ್ಲಿ ಲೆಕ್ಕಿಸಿದಾಗ ಯುದ್ಧವೀರರೆಲ್ಲರೂ 87,000 ಮಂದಿಯಾಗಿದ್ದರು.</verse>
				<verse number="6">ಬೆನ್ಯಾಮೀನನ ಪುತ್ರರು: ಬೆಳ, ಬೆಕೆರ್, ಯೆದೀಯಯೇಲ್ ಈ ಮೂರು ಮಂದಿ.</verse>
				<verse number="7">ಬೆಳನ ಪುತ್ರರು: ಎಚ್ಬೋನ್, ಉಜ್ಜೀ, ಉಜ್ಜೀಯೇಲ್, ಯೆರೀಮೋತ್ ಮತ್ತು ಈರೀ; ಈ ಐದು ಮಂದಿ ತಮ್ಮ ಪಿತೃಗಳ ಕುಟುಂಬಗಳಲ್ಲಿ ಯಜಮಾನರಾಗಿಯೂ, ಯುದ್ಧದಲ್ಲಿ ಪರಾಕ್ರಮಶಾಲಿಗಳಾಗಿಯೂ ಇದ್ದು, ತಮ್ಮ ವಂಶಾವಳಿಗಳ ಪ್ರಕಾರ 22,034 ಮಂದಿ ದಾಖಲಿಸಿದ್ದರು.</verse>
				<verse number="8">ಬೆಕೆರನ ಪುತ್ರರು: ಜೆಮೀರ, ಯೋವಾಷ್, ಎಲೀಯೆಜೆರ್, ಎಲ್ಯೋವೇನೈ, ಒಮ್ರಿ, ಯೆರೀಮೋತ್, ಅಬೀಯ, ಅನಾತೋತ್, ಆಲೆಮೆತ್ ಇವರೆಲ್ಲರು ಬೆಕೆರನ ಪುತ್ರರು.</verse>
				<verse number="9">ಪ್ರತಿಯೊಬ್ಬರೂ ಪೂರ್ವಜರ ಕುಲದ ನಾಯಕರಾಗಿದ್ದರು. ಅವರ ವಂಶಾವಳಿಯ ದಾಖಲೆಗಳಲ್ಲಿ ಪಟ್ಟಿ ಮಾಡಲಾಗಿರುವಂತೆ ಈ ಕುಲಗಳ ಪ್ರಬಲ ಯೋಧರು ಮತ್ತು ನಾಯಕರ ಒಟ್ಟು ಸಂಖ್ಯೆ 20,200 ಆಗಿತ್ತು.</verse>
				<verse number="10">ಯೆದೀಯಯೇಲನ ಪುತ್ರನು ಬಿಲ್ಹಾನ್. ಬಿಲ್ಹಾನನ ಪುತ್ರರು: ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ, ಜೇತಾನ್, ತಾರ್ಷೀಷ್ ಮತ್ತು ಅಹೀಷೆಹರ;</verse>
				<verse number="11">ಇವರೆಲ್ಲರು ಯೆದೀಯಯೇಲನ ಪುತ್ರರು. ಪ್ರತಿಯೊಬ್ಬರೂ ಪೂರ್ವಜರ ಕುಲದ ನಾಯಕರಾಗಿದ್ದರು. ಯುದ್ಧದ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡತಕ್ಕವರು 17,200 ಮಂದಿಯಾಗಿದ್ದರು.</verse>
				<verse number="12">ಅಹೇರನ ಪುತ್ರರಾದ ಈರನೂ, ಹುಶೀಮನೂ ಎಂಬವರ ಮಕ್ಕಳು ಶುಪ್ಪೀಮನೂ, ಹುಪ್ಪೀಮನೂ ಇದ್ದರು.</verse>
				<verse number="13">ನಫ್ತಾಲಿಯ ಪುತ್ರರು: ಯಹಚಿಯೇಲ್, ಗೂನೀ, ಯೇಚೆರ್, ಶಲ್ಲೂಮ್ ಇವರು ಬಿಲ್ಹಳ ಪುತ್ರರು.</verse>
				<verse number="14">ಮನಸ್ಸೆಯ ವಂಶಜರು: ಅರಾಮ್ಯಳಾದ ಮನಸ್ಸೆಯ ಉಪಪತ್ನಿಯಿಂದ ಅಸ್ರೀಯೇಲ್ ಮತ್ತು ಮಾಕೀರನನ್ನು ಮನಸ್ಸೆ ಪಡೆದನು. ಮಾಕೀರನು ಗಿಲ್ಯಾದನ ತಂದೆ.</verse>
				<verse number="15">ಆದರೆ ಈ ಮಾಕೀರನು ಹುಪ್ಪೀಮ್ ಮತ್ತು ಶುಪ್ಪೀಮರ ಸಹೋದರಿಯಾದ ಮಾಕಳನ್ನು ಹೆಂಡತಿಯಾಗಿ ತೆಗೆದುಕೊಂಡನು. ಅವನ ಮೊಮ್ಮಗನ ಹೆಸರು ಚೆಲೊಫಾದನು; ಈ ಚೆಲೋಫಾದನಿಗೆ ಪುತ್ರಿಯರು ಮಾತ್ರ ಇದ್ದರು.</verse>
				<verse number="16">ಮಾಕೀರನ ಹೆಂಡತಿಯಾದ ಮಾಕಳು ಮಗನನ್ನು ಹೆತ್ತು, ಪೆರೆಷ್ ಎಂದು ಹೆಸರಿಟ್ಟಳು. ಅವನ ಸಹೋದರನ ಹೆಸರು ಶೆರೆಷ್. ಇವನಿಗೆ ಊಲಾಮ್, ರೆಕೆಮ್ ಎಂಬ ಇಬ್ಬರು ಪುತ್ರರಿದ್ದರು.</verse>
				<verse number="17">ಊಲಾಮ್ ಮಗನು ಬೆದಾನ್. ಇವರೇ ಮನಸ್ಸೆಯ ಮಗನಾಗಿರುವ ಮಾಕೀರನ ಮಗ ಗಿಲ್ಯಾದನ ಪುತ್ರರು.</verse>
				<verse number="18">ಅವನ ಸಹೋದರಿ ಹಮ್ಮೋಲೆಕೆತಳು ಈಷ್ಹೋದನನ್ನೂ, ಅಬೀಯೆಜೆರನನ್ನೂ, ಮಹ್ಲನನ್ನೂ ಹೆತ್ತಳು.</verse>
				<verse number="19">ಶೆಮೀದನನ ಪುತ್ರರು: ಅಹ್ಯಾನ್, ಶೆಕೆಮ್, ಲಿಕ್ಹೀ, ಅನೀಯಾಮ್.</verse>
				<verse number="20">ಎಫ್ರಾಯೀಮನ ವಂಶಜರು: ಶೂತೆಲಹ, ಅವನ ಮಗನು ಬೆರೆದ್; ಅವನ ಮಗನು ತಹಾತ್; ಅವನ ಮಗನು ಎಲ್ಲಾದ, ಅವನ ಮಗನು ತಹತ್;</verse>
				<verse number="21">ಅವನ ಮಗನು ಜಾಬಾದ್; ಅವನ ಮಗನು ಶೂತೆಲಹ, ಏಜೆರ್, ಎಲಿಯಾದ್. ಆ ದೇಶದಲ್ಲಿ ಹುಟ್ಟಿದ ಗತ್‌ನವರು ಇವರ ಪಶುಗಳನ್ನು ಹಿಡಿದುಕೊಳ್ಳಲು ಇಳಿದು ಬಂದಾಗ, ಇವರನ್ನು ಕೊಂದುಹಾಕಿದರು.</verse>
				<verse number="22">ಅವರ ತಂದೆಯಾದ ಎಫ್ರಾಯೀಮನು ಅನೇಕ ದಿವಸಗಳು ದುಃಖಪಟ್ಟದ್ದರಿಂದ, ಅವನ ಸಹೋದರರು ಅವನನ್ನು ಆದರಿಸಲು ಬಂದರು.</verse>
				<verse number="23">ಅವನು ತನ್ನ ಹೆಂಡತಿಯ ಬಳಿಗೆ ಸೇರಿದಾಗ, ಅವಳು ಗರ್ಭಧರಿಸಿ ಮಗನನ್ನು ಹೆತ್ತಳು. ಆಗ ತನ್ನ ಮನೆಯಲ್ಲಿ ಕೇಡು ಉಂಟಾದದ್ದರಿಂದ ಅವನಿಗೆ ಬೆರೀಯ ಎಂದು ಹೆಸರಿಟ್ಟನು.</verse>
				<verse number="24">ಇವನ ಪುತ್ರಿಯ ಹೆಸರು ಶೇರಳು. ಇವಳು ಕೆಳಗಿನ ಬೇತ್ ಹೋರೋನ್, ಮೇಲಿನ ಬೇತ್ ಹೋರೋನ್ ಮತ್ತು ಉಜ್ಜೇನ್ ಶೇರವನ್ನೂ ಕಟ್ಟಿಸಿದಳು.</verse>
				<verse number="25">ಇವರ ಪುತ್ರರು: ರೆಫಹನ ಮಗನು ರೆಷೆಫನು, ರೆಷೆಫನ ಮಗನು ತೆಲಹನು, ಅವನ ಮಗನು ತಹನನು,</verse>
				<verse number="26">ಅವನ ಮಗನು ಲದ್ದಾನ್, ಅವನ ಮಗನು ಅಮ್ಮೀಹೂದ, ಅವನ ಮಗನು ಎಲೀಷಾಮಾ,</verse>
				<verse number="27">ಅವನ ಮಗನು ನೂನನು, ಅವನ ಮಗನು ಯೆಹೋಶುವ.</verse>
				<verse number="28">ಅವರ ವಶಪಡಿಸಿಕೊಂಡು ನಿವಾಸಮಾಡಿದ ಬೇತೇಲೂ, ಅದರ ಗ್ರಾಮಗಳೂ ಪೂರ್ವದಿಕ್ಕಿನಲ್ಲಿ ನಾರಾನನೂ, ಪಶ್ಚಿಮ ದಿಕ್ಕಿನಲ್ಲಿ ಗೆಜೆರ್, ಅದರ ಗ್ರಾಮಗಳೂ ಒಳಗೊಂಡಿತ್ತು; ಶೆಕೆಮ್, ಅಯ್ಯಾ ಪಟ್ಟಣಗಳೂ ಅದರ ಗ್ರಾಮಗಳೂ ಇವೇ.</verse>
				<verse number="29">ಗಾಜವೂ, ಮನಸ್ಸೆಯ ಸಂತಾನದವರ ಮೇರೆಯಲ್ಲಿರುವ ಬೇತ್ ಷೆಯಾನೂ, ತಾನಕವೂ, ಮೆಗಿದ್ದೋ, ದೋರ್ ಮತ್ತು ಇವುಗಳ ಗ್ರಾಮಗಳು ಇವುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಸಂತಾನದವರು ವಾಸವಾಗಿದ್ದರು.</verse>
				<verse number="30">ಆಶೇರನ ಪುತ್ರರು: ಇಮ್ನ, ಇಷ್ವ, ಇಷ್ವೀ, ಬೆರೀಯ, ಅವರ ಸಹೋದರಿಯಾದ ಸೆರಹಳು.</verse>
				<verse number="31">ಬೆರೀಯನ ಪುತ್ರರು: ಹೆಬೆರನು, ಮಲ್ಕೀಯೇಲ್ ಇವನು ಬಿರ್ಜಾಯಿತನ ತಂದೆಯು.</verse>
				<verse number="32">ಹೆಬೆರನು ಯಫ್ಲೇಟನನ್ನೂ, ಶೋಮೇರನನ್ನೂ, ಹೋತಾಮನನ್ನೂ, ಅವರ ಸಹೋದರಿಯಾದ ಶೂವಳನ್ನೂ ಪಡೆದನು.</verse>
				<verse number="33">ಯಫ್ಲೇಟನ ಪುತ್ರರು: ಪಾಸಕನು, ಬಿಮ್ಹಾಲನು, ಅಶ್ವಾತನು ಇವರೇ ಯಫ್ಲೇಟನ ಮಕ್ಕಳು.</verse>
				<verse number="34">ಶೆಮೆರನ ಪುತ್ರರು: ಅಹೀಯು, ರೊಹ್ಗನು, ಹುಬ್ಬನು, ಅರಾಮ್.</verse>
				<verse number="35">ಅವನ ಸಹೋದರನಾದ ಹೆಲೆಮನ ಪುತ್ರರು: ಚೋಫಹನು, ಇಮ್ನನು, ಶೇಲೆಷ್‌ನು, ಆಮಾಲನು.</verse>
				<verse number="36">ಚೋಫಹನ ಪುತ್ರರು: ಸೂಹ, ಹರ್ನೆಫೆರ್, ಶೂಗಾಲ್, ಬೇರೀ, ಇಮ್ರ,</verse>
				<verse number="37">ಬೆಚೆರ್, ಹೋದ್, ಶಮ್ಮ, ಶಿಲ್ಷ, ಇತ್ರಾನ್, ಬೇರನು.</verse>
				<verse number="38">ಯೆತೆರನ ಪುತ್ರರು: ಯೆಫುನ್ನೆ, ಪಿಸ್ಪ, ಅರಾ.</verse>
				<verse number="39">ಉಲ್ಲನ ಪುತ್ರರು: ಆರಹ, ಹನ್ನೀಯೇಲ್, ರಿಚ್ಯ.</verse>
				<verse number="40">ಇವರೆಲ್ಲರು ಆಶೇರನ ಮಕ್ಕಳಾಗಿದ್ದು, ತಮ್ಮ ತಂದೆಯ ಕುಟುಂಬದಲ್ಲಿ ಯಜಮಾನರಾಗಿಯೂ, ಯುದ್ಧ ಪರಾಕ್ರಮಶಾಲಿಗಳಲ್ಲಿ ಮುಖ್ಯಸ್ಥರಾಗಿಯೂ, ಪ್ರಭುಗಳಲ್ಲಿ ಶ್ರೇಷ್ಠರಾಗಿಯೂ ಇದ್ದರು. ಅವರ ವಂಶಾವಳಿಯಲ್ಲಿ ದಾಖಲಿಸಿದ ಲೆಕ್ಕದ ಪ್ರಕಾರ ಯುದ್ಧಕ್ಕೆ ಸಿದ್ಧವಿರುವ 26,000 ಮಂದಿ ಇದ್ದರು.</verse>
			</chapter>
			<chapter number="8">
				<verse number="1">ಬೆನ್ಯಾಮೀನನ ಮಕ್ಕಳು: ಚೊಚ್ಚಲಮಗನಾದ ಬೆಳನನ್ನೂ, ಎರಡನೆಯವನಾದ ಅಷ್ಬೇಲನನ್ನೂ, ಮೂರನೆಯವನಾದ ಅಹ್ರಹನನ್ನೂ,</verse>
				<verse number="2">ನಾಲ್ಕನೆಯವನಾದ ನೋಹನನ್ನೂ, ಐದನೆಯವನಾದ ರಾಫನನ್ನೂ ಪಡೆದನು.</verse>
				<verse number="3">ಬೆಳನ ಪುತ್ರರು: ಅದ್ದಾರ್, ಗೇರ, ಅಬೀಹೂದ್,</verse>
				<verse number="4">ಅಬೀಷೂವನು, ನಾಮಾನನು, ಅಹೋಹನು,</verse>
				<verse number="5">ಗೇರನು, ಶೆಫುಫಾನನು, ಹೂರಾಮನು.</verse>
				<verse number="6">ಏಹೂದನ ಪುತ್ರರು: ನಾಮಾನನು, ಅಹೀಯನು, ಗೇರನು. ಇವರೇ ಗಿಬೆಯ ನಿವಾಸಿಗಳ ಕುಟುಂಬಗಳಲ್ಲಿ ಯಜಮಾನರಾಗಿದ್ದರು. ಆದರೆ ಅವರನ್ನು ಮಾನಹತಿಗೆ ತೆಗೆದುಕೊಂಡು ಹೋದರು.</verse>
				<verse number="7">ನಾಮಾನ್, ಅಹೀಯ, ಗೇರನನ್ನು ತೆಗೆದುಕೊಂಡು ಹೋದ ತರುವಾಯ, ಉಜ್ಜನನ್ನೂ, ಅಹೀಹೂದನನ್ನೂ ಪಡೆದನು.</verse>
				<verse number="8">ಇದಲ್ಲದೆ ಅವನು ಅವರನ್ನು ಕಳುಹಿಸಿದ ತರುವಾಯ, ಶಹರಯಿಮನು ಮೋವಾಬಿನ ದೇಶದಲ್ಲಿ ಮಕ್ಕಳನ್ನು ಪಡೆದನು. ಹುಷೀಮಳೂ, ಬಾರಳೂ ಅವನಿಗೆ ಪತ್ನಿಯರಾಗಿದ್ದರು.</verse>
				<verse number="9">ಇದಲ್ಲದೆ ಅವನು ತನ್ನ ಹೆಂಡತಿಯಾದ ಹೋದೆಷಳಿಂದ ಯೋವಾಬನನ್ನೂ, ಚಿಬ್ಯನನ್ನೂ, ಮೇಷನನ್ನೂ, ಮಲ್ಕಾಮನನ್ನೂ,</verse>
				<verse number="10">ಯೆಯೂಚನನ್ನೂ, ಸಾಕ್ಯನನ್ನೂ, ಮಿರ್ಮನನ್ನೂ ಪಡೆದನು. ಅವನ ಮಕ್ಕಳಾದ ಇವರು ಕುಟುಂಬಗಳಲ್ಲಿ ಯಜಮಾನರಾಗಿದ್ದರು.</verse>
				<verse number="11">ಹುಷೀಮಳಿಂದ ಅವನು ಅಬಿಟೂಬನನ್ನೂ, ಎಲ್ಪಾಲನನ್ನೂ ಪಡೆದನು.</verse>
				<verse number="12">ಎಲ್ಪಾಲನ ಪುತ್ರರು: ಏಬೆರ್, ಮಿಷಾಮ್, ಶೆಮೆದ್. ಶೆಮೆದನು ಓನೋ, ಲೋದ್ ಎಂಬ ಪಟ್ಟಣಗಳನ್ನೂ, ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಟ್ಟಿಸಿದರು.</verse>
				<verse number="13">ಇದಲ್ಲದೆ ಅವನು ಗತ್‌ನವರನ್ನು ಓಡಿಸಿಬಿಟ್ಟ ಅಯ್ಯಾಲೋನಿನ ನಿವಾಸಿಗಳ ಕುಟುಂಬಗಳಲ್ಲಿ ಬೆರೀಯ, ಶಮ ಯಜಮಾನರಾಗಿದ್ದರು.</verse>
				<verse number="14">ಅಹಿಯೋ, ಶಾಷಕ್, ಯೆರೀಮೋತ್,</verse>
				<verse number="15">ಜೆಬದ್ಯ, ಅರಾದ್, ಏದೆರ್,</verse>
				<verse number="16">ಮೀಕಾಯೇಲ್, ಇಷ್ಪ, ಯೋಹ ಇವರು ಬೆರೀಯನ ಪುತ್ರರು.</verse>
				<verse number="17">ಜೆಬದ್ಯ, ಮೆಷುಲ್ಲಾಮ್, ಹಿಜ್ಕೀ, ಹೆಬೆರ್,</verse>
				<verse number="18">ಇಷ್ಮೆರೈ, ಇಜ್ಲೀಯ, ಯೋಬಾಬ್ ಇವರು ಎಲ್ಪಾಲನ ಪುತ್ರರು.</verse>
				<verse number="19">ಶಿಮ್ಮಿಯ ಕುಮಾರರು: ಯಾಕೀಮ್, ಜಿಕ್ರಿ, ಜಬ್ದೀ,</verse>
				<verse number="20">ಎಲೀಯೆನೈ, ಚಿಲ್ಲೆತೈ, ಎಲೀಯೇಲ್,</verse>
				<verse number="21">ಅದಾಯಾ, ಬೆರಾಯ, ಶಿಮ್ರಾತ್.</verse>
				<verse number="22">ಶಾಷಕನ ಪುತ್ರರು: ಇಷ್ಪಾನ್, ಏಬೆರ್, ಎಲೀಯೇಲ್,</verse>
				<verse number="23">ಅಬ್ದೋನ್, ಜಿಕ್ರಿಯು, ಹಾನಾನ್,</verse>
				<verse number="24">ಹನನ್ಯ, ಏಲಾಮ್, ಅನೆತೋತೀಯ,</verse>
				<verse number="25">ಇಫ್ದೆಯಾಹ, ಪೆನೂಯೇಲ್.</verse>
				<verse number="26">ಶಂಷೆರೈ, ಶೆಹರ್ಯ, ಅತಲ್ಯ,</verse>
				<verse number="27">ಯಾರೆಷ್ಯ, ಎಲೀಯ, ಜಿಕ್ರಿ ಇವರು ಯೆರೋಹಾಮನ ಪುತ್ರರು.</verse>
				<verse number="28">ಇವರೇ ಕುಟುಂಬಗಳಲ್ಲಿ ಯಜಮಾನರಾಗಿದ್ದು, ತಮ್ಮ ವಂಶಗಳ ಮುಖ್ಯಸ್ಥರಾಗಿ ಯೆರೂಸಲೇಮಿನಲ್ಲಿ ವಾಸವಾಗಿದ್ದರು.</verse>
				<verse number="29">ಗಿಬ್ಯೋನನ ಮೂಲಪುರುಷನಾದ ಯೆಹಿಯೇಲನು ಗಿಬ್ಯೋನಿನಲ್ಲಿ ವಾಸವಾಗಿದ್ದನು. ಅವನ ಹೆಂಡತಿಯ ಹೆಸರು ಮಾಕಳು.</verse>
				<verse number="30">ಅವನ ಚೊಚ್ಚಲ ಮಗನು ಅಬ್ದೋನನು ನಂತರ ಚೂರನು, ಕೀಷನು, ಬಾಳನು, ನೇರನು, ನಾದಾಬನು,</verse>
				<verse number="31">ಗೆದೋರನು, ಅಹಿಯೋನು, ಜೆಕೆರನು.</verse>
				<verse number="32">ಮಿಕ್ಲೋತನು ಶಿಮಾಹನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ತಮ್ಮ ಸಹೋದರರ ಸಂಗಡ ವಾಸವಾಗಿದ್ದರು.</verse>
				<verse number="33">ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನ ಮಕ್ಕಳು ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಷ್ಬಾಳ ಎಂಬವರು.</verse>
				<verse number="34">ಯೋನಾತಾನನ ಮಗನು ಮೆರೀಬ್ಬಾಳನು; ಮೆರೀಬ್ಬಾಳನು ಮೀಕನನ್ನು ಪಡೆದನು.</verse>
				<verse number="35">ಮೀಕನ ಪುತ್ರರು: ಪಿತೋನನು, ಮೇಲಕನು, ತರೇಯನು ಮತ್ತು ಆಹಾಜನು.</verse>
				<verse number="36">ಆಹಾಜನು ಯೆಹೋವದ್ದಾಹನ ತಂದೆ. ಯೆಹೋವದ್ದಾಹನು ಆಲೆಮೆತನನ್ನೂ, ಅಜ್ಮಾವೆತನನ್ನೂ, ಜಿಮ್ರಿಯನ್ನೂ ಪಡೆದನು, ಜಿಮ್ರಿಯು ಮೋಚನನ್ನು ಪಡೆದನು.</verse>
				<verse number="37">ಮೋಚನು ಬಿನ್ನನನ್ನು ಪಡೆದನು. ಅವನ ಮಗನು ರಾಫನು. ಅವನ ಮಗನು ಎಲ್ಲಾಸನು. ಅವನ ಮಗನು ಆಚೇಲನು.</verse>
				<verse number="38">ಈ ಆಚೇಲನಿಗೆ ಆರು ಮಂದಿ ಪುತ್ರರಿದ್ದರು. ಅವರ ಹೆಸರುಗಳು ಅಜ್ರೀಕಾಮನು, ಬೋಕೆರೂ, ಇಷ್ಮಾಯೇಲನು, ಶೆಯರ್ಯನು, ಓಬದ್ಯನು, ಹಾನಾನನು, ಇವರೆಲ್ಲರು ಆಚೇಲನ ಪುತ್ರರು.</verse>
				<verse number="39">ಅವನ ಸಹೋದರನಾದ ಏಷೆಕನ ಪುತ್ರರು: ಅವನ ಚೊಚ್ಚಲಮಗನಾದ ಉಲಾಮನು, ಎರಡನೆಯವನಾದ ಯೆಯೂಷನು, ಮೂರನೆಯವನಾದ ಎಲೀಫೆಲೆಟನು.</verse>
				<verse number="40">ಈ ಉಲಾಮನ ಪುತ್ರರು ಬಿಲ್ಲುಗಾರರಾಗಿ ಯುದ್ಧದಲ್ಲಿ ಪರಾಕ್ರಮಶಾಲಿಗಳಾಗಿದ್ದರು. ಅವರಿಗೆ ಮಕ್ಕಳೂ, ಮೊಮ್ಮಕ್ಕಳೂ 150 ಮಂದಿ ಇದ್ದರು. ಇವರೆಲ್ಲರೂ ಬೆನ್ಯಾಮೀನನ ವಂಶಜರು.</verse>
			</chapter>
			<chapter number="9">
				<verse number="1">ಇಸ್ರಾಯೇಲಿನ ಎಲ್ಲಾ ಜನರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ಪಟ್ಟಿಮಾಡಲಾಗಿದೆ. ಈ ಮಾಹಿತಿ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದ್ರೋಹಿಗಳಾದದರಿಂದ ಬಾಬೆಲಿಗೆ ಸೆರೆಯವರಾಗಿ ಹೋಗಬೇಕಾಯಿತು.</verse>
				<verse number="2">ತಮ್ಮ ಸ್ವಾಸ್ತ್ಯಗಳಲ್ಲಿ, ತಮ್ಮ ಪಟ್ಟಣಗಳಲ್ಲಿ ಮೊದಲು ವಾಸವಾಗಿದ್ದವರಲ್ಲಿ ಕೆಲವರು ಇಸ್ರಾಯೇಲರೂ, ಯಾಜಕರೂ, ಲೇವಿಯರೂ ಮತ್ತು ದೇವಾಲಯದ ಸೇವಕರೂ ಆಗಿದ್ದರು.</verse>
				<verse number="3">ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಹೂದನ ಮಕ್ಕಳೂ, ಬೆನ್ಯಾಮೀನನ ಮಕ್ಕಳೂ, ಎಫ್ರಾಯೀಮ್, ಮನಸ್ಸೆ ಎಂಬವರ ಮಕ್ಕಳು ಯಾರೆಂದರೆ:</verse>
				<verse number="4">ಯೆಹೂದನ ಮಗನಾದ ಪೆರೆಚನ ಮಕ್ಕಳಲ್ಲಿ ಒಬ್ಬನಾದ ಬಾನೀಯ ಮಗನಾದ ಇಮ್ರಿಯು, ಇವನ ಮಗನಾದ ಒಮ್ರಿ, ಇವನ ಮಗನು ಅಮ್ಮೀಹೂದನು, ಇವನ ಮಗನು ಉತೈ.</verse>
				<verse number="5">ಶೇಲಾಹನರಲ್ಲಿ ಚೊಚ್ಚಲಮಗನಾದ ಅಸಾಯನು, ಅವನ ಪುತ್ರರು.</verse>
				<verse number="6">ಜೆರಹನ ಪುತ್ರರಲ್ಲಿ ಯೆಯೂವೇಲನೂ, ಅವನ ಸಹೋದರರೂ 690 ಮಂದಿ.</verse>
				<verse number="7">ಬೆನ್ಯಾಮೀನ್ಯರಲ್ಲಿ ಹಸ್ಸೆನುವಾಹನ ಮಗನು ಹೋದವ್ಯನ ಮಗನು ಮೆಷುಲ್ಲಾಮನ ಮಗ ಸಲ್ಲು,</verse>
				<verse number="8">ಯೆರೋಹಾಮನ ಮಗ ಇಬ್ನೇಯಾಹನೂ; ಮಿಕ್ರಿಯ ಮಗ ಉಜ್ಜೀಯ ಮಗ ಏಲಾನೂ; ಇಬ್ನಿಯನ ಮಗ ರೆಯೂವೇಲನ ಮಗ, ಶೆಫಟ್ಯನ ಮಗ ಮೆಷುಲ್ಲಾಮನೂ,</verse>
				<verse number="9">ಅವರ ಸಹೋದರರೂ ತಮ್ಮ ವಂಶಗಳ ಪ್ರಕಾರ 956 ಮಂದಿ. ಇವರೆಲ್ಲರು ತಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದರು.</verse>
				<verse number="10">ಯಾಜಕರಲ್ಲಿ ಯಾರೆಂದರೆ ಯೆದಾಯನೂ, ಯೆಹೋಯಾರೀಬನೂ, ಯಾಕೀನನೂ;</verse>
				<verse number="11">ದೇವರ ಮನೆಯ ಅಧಿಕಾರಿಯಾದ ಅಹೀಟೂಬನ ಮಗ ಮೆರಾಯೋತನ ಮಗ ಚಾದೋಕನ ಮಗ ಮೆಷುಲ್ಲಾಮನ ಮಗನಾದ ಹಿಲ್ಕೀಯನ ಮಗನು ಅಜರ್ಯನೂ;</verse>
				<verse number="12">ಮಲ್ಕೀಯನ ಮಗ ಪಷ್ಹೂರನ ಮಗ ಯೆರೋಹಾಮನ ಮಗ ಅದಾಯನು. ಇಮ್ಮೇರನ ಮಗ ಮೆಷಿಲ್ಲೇಮೋತನ ಮಗ ಮೆಷುಲ್ಲಾಮನ ಮಗ ಯಹ್ಜೇರನ ಮಗ ಅದೀಯೇಲನ ಮಗ ಮಾಸೈಯನೂ;</verse>
				<verse number="13">ಅವರ ಸಹೋದರರೂ ತಮ್ಮ ಕುಟುಂಬಗಳಲ್ಲಿ ಯಜಮಾನರು 1,760 ಮಂದಿಯಾಗಿದ್ದರು. ಇವರು ದೇವರ ಮನೆಯ ಸೇವೆಯ ಕೆಲಸದಲ್ಲಿ ಪರಾಕ್ರಮಶಾಲಿಗಳಾಗಿದ್ದರು.</verse>
				<verse number="14">ಲೇವಿಯರಲ್ಲಿ ಯಾರೆಂದರೆ: ಮೆರಾರೀಯ ಪುತ್ರರಲ್ಲಿ ಒಬ್ಬನಾದ ಹಷ್ಷೂಬನ ಮಗ ಅಜ್ರೀಕಾಮನ ಮಗ ಹಷಬ್ಯನ ಮಗ ಶೆಮಾಯನೂ;</verse>
				<verse number="15">ಬಕ್ಬಕ್ಕರನೂ, ಹೆರೆಷನೂ, ಗಲಾಲನೂ, ಆಸಾಫನ ಮಗ, ಜಿಕ್ರಿಯ ಮಗ, ಮೀಕನ ಮಗ ಮತ್ತನ್ಯನೂ;</verse>
				<verse number="16">ಯೆದುತೂನನ ಮಗ, ಗಲಾಲನ ಮಗ, ಶೆಮಾಯನ ಮಗ, ಓಬದ್ಯನೂ; ಎಲ್ಕಾನನ ಮಗ ಆಸನ ಮಗ ಬೆರೆಕ್ಯನೂ ಇವರು ನೆಟೋಫದವರ ಊರುಗಳಲ್ಲಿ ವಾಸವಾಗಿದ್ದರು.</verse>
				<verse number="17">ದ್ವಾರಪಾಲಕರು ಯಾರೆಂದರೆ: ಶಲ್ಲೂಮನೂ, ಅಕ್ಕೂಬನೂ, ಟಲ್ಮೋನನೂ, ಅಹೀಮನ್‌ನೂ, ಅವರ ಸಹೋದರರೂ. ಅವರಲ್ಲಿ ಶಲ್ಲೂಮನು ಮುಖ್ಯಸ್ಥನಾಗಿದ್ದನು.</verse>
				<verse number="18">ಇವರು ಈವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲಲ್ಲಿ ಕಾದುಕೊಂಡಿದ್ದರು. ಇವರು ಲೇವಿಯ ಮಕ್ಕಳ ದಂಡುಗಳಲ್ಲಿ ದ್ವಾರಪಾಲಕರಾಗಿದ್ದರು.</verse>
				<verse number="19">ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮೊಮ್ಮಗನೂ ಕೋರೇಯನ ಮರಿಮಗನಾದ ಶಲ್ಲೂಮನೂ, ಅವನ ತಂದೆಯ ಮನೆಯವರಾಗಿರುವ ತನ್ನ ಸಹೋದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲಿದ್ದು, ದೇವದರ್ಶನ ಗುಡಾರದ ಬಾಗಿಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಯೆಹೋವ ದೇವರ ಗುಡಾರದ ದ್ವಾರಗಳ ಕಾವಲಿನವರಾಗಿದ್ದರು.</verse>
				<verse number="20">ಎಲಿಯಾಜರನ ಮಗನಾದ ಫೀನೆಹಾಸನು ಮುಂಚೆ ಅವರ ಮೇಲೆ ಅಧಿಕಾರಿಯಾಗಿದ್ದನು. ಯೆಹೋವ ದೇವರು ಅವರ ಸಂಗಡ ಇದ್ದರು.</verse>
				<verse number="21">ಮೆಷೆಲೆಮ್ಯನ ಮಗನಾದ ಜೆಕರ್ಯನು ದೇವದರ್ಶನ ಗುಡಾರದ ದ್ವಾರಪಾಲಕನಾಗಿದ್ದನು.</verse>
				<verse number="22">ಬಾಗಿಲುಗಳಲ್ಲಿ ದ್ವಾರಪಾಲಕರಾಗಿರಲು ಆಯ್ಕೆಯಾದ ಇವರೆಲ್ಲರು 212 ಮಂದಿಯಾಗಿದ್ದರು. ಇವರು ಹೆಸರುಗಳು ಅವರವರ ಗ್ರಾಮಗಳಲ್ಲಿ ಅವರ ವಂಶಾವಳಿಯ ಪ್ರಕಾರ ಲಿಖಿತವಾಗಿದ್ದವು. ಇವರು ನಂಬಿಗಸ್ತರಾದ್ದರಿಂದ ದಾವೀದನೂ, ದರ್ಶಿಯಾದ ಸಮುಯೇಲನೂ ಇವರನ್ನು ಜವಾಬ್ದಾರಿಯ ಸ್ಥಾನಗಳಿಗೆ ನೇಮಿಸಿದರು.</verse>
				<verse number="23">ಹೀಗೆಯೇ ಅವರಿಗೂ, ಅವರ ಮಕ್ಕಳಿಗೂ ಯೆಹೋವ ದೇವರ ಮನೆಯ ಬಾಗಿಲು ಕಾವಲಿತ್ತು. ಅದು ದೇವದರ್ಶನ ಗುಡಾರವೆಂಬ ಮನೆಯ ಪ್ರಕಾರ ಕಾವಲುಗಾರರಿಂದ ಕಾಯಬೇಕಾಗಿತ್ತು.</verse>
				<verse number="24">ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ನಾಲ್ಕು ದಿಕ್ಕುಗಳಲ್ಲಿ ದ್ವಾರಪಾಲಕರಿದ್ದರು.</verse>
				<verse number="25">ಗ್ರಾಮಗಳಲ್ಲಿ ಇದ್ದ ಅವರ ಸಹೋದರರು ತಮ್ಮ ಕ್ರಮದ ಪ್ರಕಾರವಾಗಿ ಏಳೇಳು ದಿವಸಗಳಲ್ಲಿ ಬರುವ ನೇಮಕವಿತ್ತು.</verse>
				<verse number="26">ಏಕೆಂದರೆ ದ್ವಾರಪಾಲಕರಲ್ಲಿರುವ ನಾಲ್ಕು ಮಂದಿ ಮುಖ್ಯಸ್ಥರಾದ ಈ ಲೇವಿಯರು ತಮ್ಮ ನೇಮಕವಾದ ಉದ್ಯೋಗದಲ್ಲಿ ಇದ್ದು ದೇವರ ಆಲಯದ ಉಗ್ರಾಣಗಳ ಮೇಲೆಯೂ ಬೊಕ್ಕಸಗಳ ಜವಾಬ್ದಾರಿಯನ್ನು ವಹಿಸಲಾಗಿತ್ತು.</verse>
				<verse number="27">ಅವರು ದೇವರ ಆಲಯದ ಸುತ್ತಲೂ ರಾತ್ರಿಯನ್ನು ಕಳೆಯುತ್ತಿದ್ದರು, ಏಕೆಂದರೆ ಅವರು ಅದನ್ನು ಕಾವಲು ಕಾಯಬೇಕಾಗಿತ್ತು. ಮತ್ತು ಪ್ರತಿದಿನ ಬೆಳಿಗ್ಗೆ ಬಾಗಿಲುಗಳನ್ನು ತೆರೆಯುತ್ತಿದ್ದರು.</verse>
				<verse number="28">ಸೇವೆಯ ಸಲಕರಣೆಗಳನ್ನು ಒಳಗೆ ಲೆಕ್ಕದ ಪ್ರಕಾರ ತರುವುದಕ್ಕೂ, ಹೊರಗೆ ಲೆಕ್ಕದ ಪ್ರಕಾರ ತರುವುದಕ್ಕೂ ಅವರಲ್ಲಿ ಕೆಲವರು ಅವುಗಳ ಮೇಲೆ ನೇಮಕವಾಗಿದ್ದರು.</verse>
				<verse number="29">ಅವರಲ್ಲಿ ಕೆಲವರು ಸಲಕರಣೆಗಳನ್ನೂ, ಪರಿಶುದ್ಧ ಸ್ಥಾನದಲ್ಲಿರುವ ಎಲ್ಲಾ ಸಾಮಗ್ರಿಗಳನ್ನೂ, ನಯವಾದ ಹಿಟ್ಟನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ, ಸಾಂಬ್ರಾಣಿಯನ್ನೂ, ಸುಗಂಧಗಳನ್ನೂ ಕಾಯಲು ನೇಮಕರಾಗಿದ್ದರು.</verse>
				<verse number="30">ಯಾಜಕರ ಪುತ್ರರಲ್ಲಿ ಕೆಲವರು ಸುಗಂಧಗಳಿಂದ ತೈಲವನ್ನು ಮಾಡಿದರು.</verse>
				<verse number="31">ಕೋರಹಿಯನಾದ ಶಲ್ಲೂಮನ ಚೊಚ್ಚಲಮಗನಾದ ಮತ್ತಿತ್ಯನು ಲೇವಿಯರಲ್ಲಿ ಒಬ್ಬನಾಗಿದ್ದು, ತಟ್ಟೆಗಳ ಮೇಲೆ ಮಾಡುವ ಭಕ್ಷ್ಯಗಳ ಕೆಲಸದ ಮೇಲ್ವಿಚಾರಕನಾಗಿದ್ದನು.</verse>
				<verse number="32">ಕೊಹಾತ್ಯರ ಪುತ್ರರಾದ ಅವರ ಸಹೋದರರಲ್ಲಿ ಇನ್ನೂ ಕೆಲವರು ಸಮ್ಮುಖದ ರೊಟ್ಟಿಯನ್ನು ಪ್ರತಿ ಸಬ್ಬತ್ ದಿನದಲ್ಲಿ ಸಿದ್ಧಮಾಡುವ ಜವಾಬ್ದಾರಿಯನ್ನು ಹೊಂದಿದ್ದರು.</verse>
				<verse number="33">ಇದಲ್ಲದೆ ಲೇವಿಯರ ಕುಟುಂಬಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು, ಸ್ವತಂತ್ರವಾದ ಕೊಠಡಿಗಳಲ್ಲಿ ವಾಸವಾಗಿದ್ದರು. ಏಕೆಂದರೆ ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.</verse>
				<verse number="34">ಲೇವಿಯರ ಕುಟುಂಬಗಳಲ್ಲಿ ಮುಖ್ಯಸ್ಥರಾದ ಇವರು ತಮ್ಮ ವಂಶಗಳಲ್ಲಿ ಮುಖ್ಯಸ್ಥರಾಗಿದ್ದು ಯೆರೂಸಲೇಮಿನಲ್ಲಿ ವಾಸವಾಗಿದ್ದರು.</verse>
				<verse number="35">ಇದಲ್ಲದೆ ಗಿಬ್ಯೋನನ ಮೂಲಪುರುಷನಾದ ಯೆಹಿಯೇಲನು ಗಿಬ್ಯೋನಿನಲ್ಲಿ ವಾಸವಾಗಿದ್ದನು. ಅವನ ಹೆಂಡತಿಯ ಹೆಸರು ಮಾಕಳು.</verse>
				<verse number="36">ಅವನ ಚೊಚ್ಚಲ ಮಗನು ಅಬ್ದೋನನು ನಂತರ ಚೂರನು, ಕೀಷನು, ಬಾಳನು, ನೇರನು, ನಾದಾಬನು.</verse>
				<verse number="37">ಗೆದೋರನು, ಅಹಿಯೋನು, ಜೆಕರೀಯನು, ಮಿಕ್ಲೋತನು.</verse>
				<verse number="38">ಮಿಕ್ಲೋತನು ಶಿಮಾಮನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ತಮ್ಮ ಸಹೋದರರ ಸಂಗಡ ವಾಸವಾಗಿದ್ದರು.</verse>
				<verse number="39">ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನ ಮಕ್ಕಳು: ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಷ್ಬಾಳ ಎಂಬವರು.</verse>
				<verse number="40">ಯೋನಾತಾನನ ಮಗನು ಮೆರೀಬ್ಬಾಳನು; ಮೆರೀಬ್ಬಾಳನು ಮೀಕನನ್ನು ಪಡೆದನು.</verse>
				<verse number="41">ಮೀಕನ ಪುತ್ರರು: ಪಿತೋನನು, ಮೇಲಕನು, ತಹ್ರೀಯನು ಮತ್ತು ಆಹಾಜನು.</verse>
				<verse number="42">ಆಹಾಜನು ಯಗ್ರಾಹನನ್ನು ಪಡೆದನು; ಯಗ್ರಾಹನು ಆಲೆಮೆತನನ್ನೂ, ಅಜ್ಮಾವೆತನನ್ನೂ, ಜಿಮ್ರಿಯನ್ನೂ ಪಡೆದನು; ಜಿಮ್ರಿಯು ಮೋಚನನ್ನು ಪಡೆದನು;</verse>
				<verse number="43">ಮೋಚನು ಬಿನ್ನನನ್ನು ಪಡೆದನು; ಅವನ ಮಗನು ರೆಫಾಯನು; ಅವನ ಮಗನು ಎಲ್ಲಾಸನು; ಅವನ ಮಗನು ಆಚೇಲನು.</verse>
				<verse number="44">ಈ ಆಚೇಲನಿಗೆ ಆರು ಮಂದಿ ಪುತ್ರರಿದ್ದರು: ಅವರ ಹೆಸರುಗಳು ಅಜ್ರೀಕಾಮನು, ಬೋಕೆರೂ, ಇಷ್ಮಾಯೇಲನು, ಶೆಯರ್ಯನು, ಓಬದ್ಯನು, ಹಾನಾನನು; ಇವರೆಲ್ಲರು ಆಚೇಲನ ಪುತ್ರರು.</verse>
			</chapter>
			<chapter number="10">
				<verse number="1">ಫಿಲಿಷ್ಟಿಯರು ಇಸ್ರಾಯೇಲರ ವಿರುದ್ಧ ಯುದ್ಧಮಾಡಿದರು. ಆಗ ಇಸ್ರಾಯೇಲರು ಫಿಲಿಷ್ಟಿಯರಿಂದ ಸೋತು ಓಡಿಹೋಗಿ, ಗಿಲ್ಬೋವ ಬೆಟ್ಟದಲ್ಲಿ ಹತರಾದರು.</verse>
				<verse number="2">ಫಿಲಿಷ್ಟಿಯರು ಸೌಲನನ್ನೂ, ಅವನ ಪುತ್ರರನ್ನೂ ಬಿಡದೆ ಬೆನ್ನಟ್ಟಿ, ಸೌಲನ ಪುತ್ರರಾದ ಯೋನಾತಾನನನ್ನೂ ಅಬೀನಾದಾಬನನ್ನೂ, ಮಲ್ಕೀಷೂವನನ್ನೂ ಕೊಂದುಬಿಟ್ಟರು.</verse>
				<verse number="3">ಯುದ್ಧವು ಸೌಲನಿದ್ದ ಕಡೆಯಲ್ಲಿ ಬಹುಘೋರವಾಗಿತ್ತು; ಬಿಲ್ಲುಗಾರರು ಅವನನ್ನು ಬಾಣಗಳಿಂದ ಹೊಡೆದಾಗ ಅವನು ತೀವ್ರವಾಗಿ ಗಾಯಗೊಂಡನು.</verse>
				<verse number="4">ಆಗ ಸೌಲನು ತನ್ನ ಆಯುಧಗಳನ್ನು ಹೊರುವವನಿಗೆ, “ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅವಮಾನ ಮಾಡದ ಹಾಗೆ, ನೀನು ನಿನ್ನ ಖಡ್ಗವನ್ನು ಹಿರಿದು ನನ್ನನ್ನು ತಿವಿ,” ಎಂದನು. ಆದರೆ ಅವನ ಆಯುಧ ಹೊರುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಖಡ್ಗವನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.</verse>
				<verse number="5">ಸೌಲನು ಸತ್ತು ಹೋದದ್ದನ್ನು ಅವನ ಆಯುಧ ಹೊರುವವನು ಕಂಡಾಗ, ಅವನೂ ತನ್ನ ಖಡ್ಗದ ಮೇಲೆ ಬಿದ್ದು, ಅವನ ಸಂಗಡ ಸತ್ತನು.</verse>
				<verse number="6">ಸೌಲನೂ, ಅವನ ಮೂರು ಮಂದಿ ಪುತ್ರರೂ, ಅವನ ಮನೆಯವರೆಲ್ಲರೂ ಒಟ್ಟಾಗಿ ಅದೇ ದಿನ ಸತ್ತರು.</verse>
				<verse number="7">ಇಸ್ರಾಯೇಲರ ಸೈನಿಕರು ಸೋತು ಹೋದರೆಂದೂ, ಸೌಲನೂ, ಅವನ ಪುತ್ರರೂ ಸತ್ತರೆಂದೂ ತಗ್ಗಿನಲ್ಲಿ ವಾಸವಾಗಿದ್ದ ಇಸ್ರಾಯೇಲರೆಲ್ಲರು ಕಂಡಾಗ, ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.</verse>
				<verse number="8">ಮಾರನೆಯ ದಿವಸದಲ್ಲಿ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳಲು ಬಂದಾಗ, ಗಿಲ್ಬೋವ ಬೆಟ್ಟದಲ್ಲಿ ಸತ್ತುಬಿದ್ದಿರುವ ಸೌಲನನ್ನೂ, ಅವನ ಪುತ್ರರನ್ನೂ ಕಂಡರು.</verse>
				<verse number="9">ಅವರು ಅವನನ್ನು ಸುಲಿದುಕೊಂಡು ಅವನ ತಲೆಯನ್ನೂ, ಅವನ ಆಯುಧಗಳನ್ನೂ ತೆಗೆದುಕೊಂಡು, ತಮ್ಮ ವಿಗ್ರಹಗಳ ಮಂದಿರಗಳಿಗೂ, ಜನರಿಗೂ ಜಯವಾರ್ತೆಯನ್ನು ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿಸಿದರು.</verse>
				<verse number="10">ಸೌಲನ ಆಯುಧಗಳನ್ನು ತಮ್ಮ ದೇವರುಗಳ ಮಂದಿರದಲ್ಲಿ ಇಟ್ಟು, ಅವನ ತಲೆಯನ್ನು ದಾಗೋನನ ಆಲಯದಲ್ಲಿ ನೇತುಹಾಕಿದರು.</verse>
				<verse number="11">ಫಿಲಿಷ್ಟಿಯರು ಸೌಲನಿಗೆ ಮಾಡಿದ್ದನ್ನೆಲ್ಲಾ ಯಾಬೇಷ್ ಗಿಲ್ಯಾದಿನವರೆಲ್ಲರು ಕೇಳಿದಾಗ,</verse>
				<verse number="12">ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು ಸೌಲನ ಶವವನ್ನೂ, ಅವನ ಪುತ್ರರ ಶವಗಳನ್ನೂ ತೆಗೆದುಕೊಂಡು ಯಾಬೇಷಿಗೆ ಬಂದು, ಅವರ ಎಲುಬುಗಳನ್ನು ತೆಗೆದುಕೊಂಡು, ಅವುಗಳನ್ನು ಯಾಬೇಷಿನಲ್ಲಿರುವ ಒಂದು ಏಲಾ ಮರದ ಕೆಳಗೆ ಸಮಾಧಿಮಾಡಿ, ಏಳು ದಿವಸ ಉಪವಾಸ ಮಾಡಿದರು.</verse>
				<verse number="13">ಹೀಗೆಯೇ ಸೌಲನು ಯೆಹೋವ ದೇವರಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಯೆಹೋವ ದೇವರ ವಾಕ್ಯವನ್ನು ಕೈಗೊಳ್ಳದೆ, ಅದಕ್ಕೆ ವಿರೋಧವಾಗಿ ನಡೆದು, ಯೆಹೋವ ದೇವರನ್ನು ವಿಚಾರಿಸದೆ, ಯಕ್ಷಿಣಿಗಾರರನ್ನು ವಿಚಾರಿಸಿದ್ದರಿಂದ,</verse>
				<verse number="14">ಯೆಹೋವ ದೇವರು ಅವನನ್ನು ಕೊಂದುಹಾಕಿ, ರಾಜ್ಯವನ್ನು ಇಷಯನ ಮಗನಾದ ದಾವೀದನ ಕಡೆಗೆ ತಿರುಗಿಸಿದರು.</verse>
			</chapter>
			<chapter number="11">
				<verse number="1">ಇಸ್ರಾಯೇಲರೆಲ್ಲರು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದು, “ಇಗೋ, ನಾವು ನಿನ್ನ ಎಲುಬೂ, ನಿನ್ನ ಮಾಂಸವೂ ಆಗಿದ್ದೇವೆ.</verse>
				<verse number="2">ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ, ನೀನು ದಳಪತಿಯಾಗಿ ಇಸ್ರಾಯೇಲನ್ನು ಹೊರಗೆ ನಡೆಸುವವನಾಗಿಯೂ, ಒಳಗೆ ತರುವವನಾಗಿಯೂ ಇದ್ದವನು. ಆದ್ದರಿಂದ ನಿನ್ನ ದೇವರಾದ ಯೆಹೋವ ದೇವರು ನಿನಗೆ, ‘ನೀನು ನನ್ನ ಜನರಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವೆ,’ ಎಂದು ವಾಗ್ದಾನ ಮಾಡಿದ್ದು ನಿಮ್ಮನ್ನು ಕುರಿತೇ,” ಎಂದು ಹೇಳಿ ವಂದಿಸಿದರು.</verse>
				<verse number="3">ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಯೆಹೋವ ದೇವರು ಸಮುಯೇಲನ ಮುಖಾಂತರ ಹೇಳಿದ ವಾಕ್ಯದ ಪ್ರಕಾರ ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.</verse>
				<verse number="4">ದಾವೀದನೂ, ಸಮಸ್ತ ಇಸ್ರಾಯೇಲರೂ ಯೆಬೂಸಿಯರ ವಿರುದ್ಧವಾಗಿ ಯೆರೂಸಲೇಮಿಗೆ ಹೋದರು.</verse>
				<verse number="5">ಆ ದೇಶದ ಮೂಲನಿವಾಸಿಗಳಾದ ಯೆಬೂಸಿಯರು ದಾವೀದನಿಗೆ, “ನೀನು ಇದರೊಳಗೆ ಬರಲು ಸಾಧ್ಯವಿಲ್ಲ,” ಎಂದರು. ಆದರೂ ದಾವೀದನು, ಚೀಯೋನಿನ ಕೋಟೆಯನ್ನು ವಶಪಡಿಸಿಕೊಂಡನು. ಅದೇ ದಾವೀದನ ಪಟ್ಟಣವು.</verse>
				<verse number="6">“ಯೆಬೂಸಿಯರಲ್ಲಿ ಒಬ್ಬನನ್ನು ಯಾರು ಮೊದಲು ಕೊಲ್ಲುವನೋ, ಅವನು ನನ್ನ ದಳಪತಿಯಾಗುವನು,” ಎಂದು ದಾವೀದ ಪ್ರಕಟಿಸಿದ್ದನು. ಹಾಗೆಯೇ ಚೆರೂಯಳ ಮಗ ಯೋವಾಬನು ಮೊದಲು ಹೋಗಿ ದಳಪತಿಯಾದನು.</verse>
				<verse number="7">ದಾವೀದನು ಕೋಟೆಯಲ್ಲಿ ವಾಸಮಾಡಿದನು. ಆದಕಾರಣ ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟರು.</verse>
				<verse number="8">ಅವನು ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಪಟ್ಟಣವನ್ನು ಪುನಃ ಕಟ್ಟಿದನು. ಆದರೆ ಪಟ್ಟಣದ ಉಳಿದ ಭಾಗವನ್ನು ಯೋವಾಬನು ಭದ್ರಮಾಡಿಸಿದನು.</verse>
				<verse number="9">ಹೀಗೆಯೇ ಸೇನಾಧೀಶ್ವರ ಯೆಹೋವ ದೇವರು ದಾವೀದನ ಸಂಗಡ ಇದ್ದುದರಿಂದ ಅವನು ದಿನದಿನಕ್ಕೆ ಬಲಗೊಳ್ಳುತ್ತಾ ಇದ್ದನು.</verse>
				<verse number="10">ದಾವೀದನ ಬಳಿಯಲ್ಲಿದ್ದ ಮುಖ್ಯಸ್ಥರಾದ ಪರಾಕ್ರಮಶಾಲಿಗಳು ಇವರೇ. ಇಸ್ರಾಯೇಲನ್ನು ಕುರಿತು ಯೆಹೋವ ದೇವರು ಹೇಳಿದ ವಾಕ್ಯದ ಪ್ರಕಾರ, ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಅವರು ಸಮಸ್ತ ಇಸ್ರಾಯೇಲಿನ ಸಂಗಡ ಅವನ ರಾಜ್ಯದಲ್ಲಿ ತಮ್ಮ ಸಂಪೂರ್ಣ ಸಹಾಯ ನೀಡಿದರು.</verse>
				<verse number="11">ದಾವೀದನ ಪರಾಕ್ರಮಶಾಲಿಗಳ ಪಟ್ಟಿ: ಹಕ್ಮೋನಿಯನಾದ ಯಾಷೊಬ್ಬಾಮನು ಅಧಿಪತಿಗಳಲ್ಲಿ ಮುಖ್ಯಸ್ಥನಾಗಿದ್ದನು. ಇವನು ತನ್ನ ಈಟಿಯಿಂದ ಮುನ್ನೂರು ಮಂದಿಗೆ ವಿರೋಧವಾಗಿ ಹೋರಾಡಿ ಅವರನ್ನು ಒಂದೇ ಕಾಳಗದಲ್ಲಿ ಕೊಂದುಹಾಕಿದನು.</verse>
				<verse number="12">ಇವನ ತರುವಾಯ ಅಹೋಹ್ಯನಾಗಿರುವ ದೋದೋ ಎಂಬವನ ಮಗನಾಗಿರುವ ಎಲಿಯಾಜರನು, ಮೂವರು ಪರಾಕ್ರಮಶಾಲಿಗಳಲ್ಲಿ ಒಬ್ಬನಾಗಿದ್ದನು.</verse>
				<verse number="13">ಪಸ್ ದಮ್ಮೀಮ್ ಎಂಬಲ್ಲಿ ಫಿಲಿಷ್ಟಿಯರು ಜವೆಗೋಧಿ ತುಂಬಿರುವ ಹೊಲದಲ್ಲಿ ಯುದ್ಧಕ್ಕಾಗಿ ಸೇರಿದಾಗ ಇವನು ದಾವೀದನ ಸಂಗಡ ಇದ್ದನು. ಅಲ್ಲಿ ಇಸ್ರಾಯೇಲ್ ಸೈನ್ಯದವರು ಫಿಲಿಷ್ಟಿಯರ ಎದುರಿನಿಂದ ಓಡಿಹೋದರು.</verse>
				<verse number="14">ಆಗ ಇವನು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದುಹಾಕಿ ಹೊಲವನ್ನು ಕಾಪಾಡಿದನು. ಹೀಗೆ ಯೆಹೋವ ದೇವರು ಮಹಾಜಯವನ್ನು ಉಂಟುಮಾಡಿದರು.</verse>
				<verse number="15">ಮೂವತ್ತು ಮಂದಿ ಪರಾಕ್ರಮಶಾಲಿಗಳ ಮುಖ್ಯಸ್ಥರಲ್ಲಿ ಮೂರು ಮಂದಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಗುಡ್ಡಕ್ಕೆ ಬಂದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿತ್ತು.</verse>
				<verse number="16">ದಾವೀದನು ಕೋಟೆ ಸ್ಥಳದಲ್ಲಿ ಇದ್ದನು, ಫಿಲಿಷ್ಟಿಯರ ದಂಡು ಬೇತ್ಲೆಹೇಮಿನಲ್ಲಿತ್ತು.</verse>
				<verse number="17">ಆಗ ದಾವೀದನು, “ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ನನಗೆ ಕುಡಿಯಲು ಕೊಡುವವನ್ಯಾರು,” ಎಂದು ಬಹು ಆಶೆಯಿಂದ ಹೇಳಿದನು.</verse>
				<verse number="18">ಆಗ ಆ ಮೂವರು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿಹೋಗಿ, ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತೆಗೆದುಕೊಂಡು ಬಂದರು. ಆದರೆ ಅದನ್ನು ಅವನು ಕುಡಿಯದೇ ಯೆಹೋವ ದೇವರಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದು,</verse>
				<verse number="19">“ದೇವರು ಇಂಥಾ ಕಾರ್ಯವನ್ನು ನನಗೆ ದೂರವಾಗಿ ಮಾಡಲಿ. ನಾನು ಈ ಮನುಷ್ಯರ ಪ್ರಾಣದ ರಕ್ತವನ್ನು ಕುಡಿಯಬಹುದೇ? ತಮ್ಮ ಪ್ರಾಣದಾಶೆ ತೊರೆದು ಈ ನೀರನ್ನು ತಂದರಲ್ಲಾ?” ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇಂಥಾ ಮಹಾಕಾರ್ಯಗಳನ್ನು ಈ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು.</verse>
				<verse number="20">ಇದಲ್ಲದೆ ಯೋವಾಬನ ಸಹೋದರನಾದ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು.</verse>
				<verse number="21">ಈ ಮೂವರಲ್ಲಿ ಅವನು ಇಬ್ಬರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು, ಆದ್ದರಿಂದ ಅವನು ಅವರಲ್ಲಿ ಪ್ರಧಾನನಾದನು; ಆದರೂ ಆ ಮೊದಲಿನ ಮೂರು ಜನರಿಗೆ ಅವನು ಸಮಾನನಾಗಿರಲಿಲ್ಲ.</verse>
				<verse number="22">ಕಬ್ಜಯೇಲನ ಪರಾಕ್ರಮಶಾಲಿಯ ಮೊಮ್ಮಗನೂ ಯೆಹೋಯಾದಾವನ ಮಗನೂ ಆದ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದನು; ಅವನು ಬಲಶಾಲಿಯಾದ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.</verse>
				<verse number="23">ಅವನು ಏಳುವರೆ ಅಡಿ ಎತ್ತರವಾಗಿದ್ದ ಒಬ್ಬ ಈಜಿಪ್ಟಿನವನನ್ನು ಹೊಡೆದುಬಿಟ್ಟನು; ಆ ಈಜಿಪ್ಟಿನವನ ಕೈಯಲ್ಲಿ ನೇಯ್ಗೆಗಾರರ ಕುಂಟೆಯಷ್ಟು ದಪ್ಪವಾದ ಒಂದು ಈಟಿ ಇದ್ದರೂ, ತಾನು ಒಂದು ಕೋಲು ಹಿಡಿದುಕೊಂಡು ಅವನ ಬಳಿಗೆ ಹೋಗಿ, ಈಜಿಪ್ಟಿನವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು, ಅವನ ಈಟಿಯಿಂದಲೇ ಅವನನ್ನು ಕೊಂದುಹಾಕಿದನು.</verse>
				<verse number="24">ಇವುಗಳನ್ನು ಯೆಹೋಯಾದಾವನ ಮಗ ಬೆನಾಯನು ಮಾಡಿದ್ದರಿಂದ, ಮೂರು ಮಂದಿ ಪರಾಕ್ರಮಶಾಲಿಗಳಂತೆಯೇ ಹೆಸರುಗೊಂಡನು.</verse>
				<verse number="25">ಅವನು ಮೂವತ್ತು ಜನರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು; ಆದರೆ ಆ ಮೊದಲಿನ ಮೂರು ಮಂದಿಯಲ್ಲಿ ಅವನನ್ನು ಸೇರಿಸಲಾಗಲಿಲ್ಲ; ದಾವೀದನು ಅವನನ್ನು ತನ್ನ ಮೈಗಾವಲಿನವರ ಮೇಲೆ ಯಜಮಾನನನ್ನಾಗಿ ಇಟ್ಟನು.</verse>
				<verse number="26">ಇದಲ್ಲದೆ ದಂಡುಗಳಲ್ಲಿರುವ ಪರಾಕ್ರಮಶಾಲಿಗಳು ಯಾರೆಂದರೆ: ಯೋವಾಬನ ಸಹೋದರನಾದ ಅಸಾಯೇಲನು; ಬೇತ್ಲೆಹೇಮ್ ಊರಿನ ದೋದೋವಿನ ಮಗ ಎಲ್ಹನಾನನು;</verse>
				<verse number="27">ಹರೋರಿಯನಾದ ಶಮ್ಮೋತನು; ಪೆಲೋನ್ಯನಾದ ಹೆಲೆಚನು;</verse>
				<verse number="28">ತೆಕೋವದ ಇಕ್ಕೇಷನ ಮಗನಾದ ಈರನು; ಅನಾತೋತಿನವನಾದ ಅಬೀಯೆಜೆರನು;</verse>
				<verse number="29">ಹುಷಾ ಊರಿನವನಾದ ಸಿಬ್ಬೆಕೈ; ಅಹೋಹ್ಯನಾದ ಈಲೈ;</verse>
				<verse number="30">ನೆಟೋಫದವನಾದ ಮಹರೈ; ನೆಟೋಫದವನಾದ ಬಾಣನ ಮಗ ಹೆಲೇದ್;</verse>
				<verse number="31">ಬೆನ್ಯಾಮೀನ್ಯರಿಗೆ ಸೇರಿದ ಗಿಬೆಯ ಊರಿನ ರೀಬೈ ಎಂಬುವನ ಮಗನಾದ ಇತ್ತೈ, ಪಿರಾತೋನ್ಯನಾದ ಬೆನಾಯನು;</verse>
				<verse number="32">ಹೊಳೆಗಳುಳ್ಳ ಗಾಷ್ ಊರಿನವನಾದ ಹೂರೈ; ಅರಾಬಾ ತಗ್ಗಿನವನಾದ ಅಬೀಯೇಲನು;</verse>
				<verse number="33">ಬಹರೂಮ್ಯನಾದ ಅಜ್ಮಾವೆತನು; ಶಾಲ್ಬೋನ್ಯನಾದ ಎಲೆಯಖ್ಬಾನು;</verse>
				<verse number="34">ಗೀಜೋನ್ಯನಾದ ಹಾಷೇಮನ ಪುತ್ರರು; ಹರಾರ್ಯನಾದ ಶಾಗೇಯ ಮಗ ಯೋನಾತಾನನು;</verse>
				<verse number="35">ಹರಾರ್ಯನಾದ ಶಾಕಾರನ ಮಗನಾದ ಅಹೀಯಾಮನು; ಊರನ ಮಗನಾದ ಎಲಿಫಾಲನು;</verse>
				<verse number="36">ಮೆಕೆರಾತಿಯನಾದ ಹೇಫೆರನು; ಪೆಲೋನ್ಯನಾದ ಅಹೀಯನು;</verse>
				<verse number="37">ಕರ್ಮೇಲ್ಯನಾದ ಹೆಚ್ರೋ; ಎಜ್ಬೈನ ಮಗನಾದ ನಾರಾಯಿ;</verse>
				<verse number="38">ನಾತಾನನ ಸಹೋದರನಾದ ಯೋಯೇಲನು; ಹಗ್ರೀಯನ ಮಗನಾದ ಮಿಬ್ಹಾರನು;</verse>
				<verse number="39">ಅಮ್ಮೋನಿಯನಾದ ಚೆಲೆಕನು; ಚೆರೂಯಳ ಮಗನಾದ ಯೋವಾಬನ ಆಯುಧವಾಹಕನು ಆಗಿದ್ದ ಬೇರೋತ್ಯನಾದ ನಹರೈ;</verse>
				<verse number="40">ಯೆತೆರಿಯನಾದ ಈರನು; ಯೆತೆರಿಯನಾದ ಗಾರೇಬನು;</verse>
				<verse number="41">ಹಿತ್ತಿಯನಾದ ಊರೀಯನು; ಅಹ್ಲಾಯಿಯ ಮಗನಾದ ಜಾಬಾದನು;</verse>
				<verse number="42">ರೂಬೇನ್ಯನಾದ ಶೀಜನ ಮಗನಾದ ಅದೀನನು; ಇವನು ರೂಬೇನ್ಯರಲ್ಲಿ ಅಧಿಪತಿಯಾಗಿದ್ದನು; ಮೂವತ್ತು ಮಂದಿ ಅವನ ಸಂಗಡ ಇದ್ದರು.</verse>
				<verse number="43">ಮಾಕನ ಮಗನಾದ ಹಾನಾನನು; ಮೆತೆನದವನಾದ ಯೋಷಾಫಾಟ್;</verse>
				<verse number="44">ಅಷ್ಟೆರಾತ್ಯನಾದ ಉಜ್ಜೀಯ; ಅರೋಯೇರಿನಾದ ಹೋತಾಮನ ಮಕ್ಕಳಾಗಿರುವ ಶಾಮಾ, ಯೆಹೀಯೇಲ್;</verse>
				<verse number="45">ಶಿಮ್ರಿಯ ಮಗನಾದ ಎದೀಗಯೇಲ್; ಅವನ ಸಹೋದರನಾದ, ತೀಚೀಯನಾದ ಯೋಹ;</verse>
				<verse number="46">ಮಹಾವಿಯನಾದ ಎಲೀಯೇಲ್; ಎಲ್ನಾಮನ ಮಕ್ಕಳಾದ ಯೆರೀಬೈ ಮತ್ತು ಯೋಷವ್ಯ; ಮೋವಾಬ್ಯನಾದ ಇತ್ಮ;</verse>
				<verse number="47">ಎಲೀಯೇಲ್; ಓಬೇದ್; ಮೆಚೊಬಾಯದವನಾದ ಯಾಸೀಯೇಲ್.</verse>
			</chapter>
			<chapter number="12">
				<verse number="1">ಕೀಷನ ಮಗ ಸೌಲನ ನಿಮಿತ್ತ ದಾವೀದನು ಇನ್ನೂ ಬಚ್ಚಿಟ್ಟುಕೊಂಡಿರುವಾಗ, ಚಿಕ್ಲಗಿನಲ್ಲಿರುವ ದಾವೀದನ ಬಳಿಗೆ ಬಂದವರು ಇವರೇ. ಅವರು ಪರಾಕ್ರಮಶಾಲಿಗಳಲ್ಲಿ ಸೇರಿದವರೂ, ಯುದ್ಧಕ್ಕೆ ಸಹಾಯಕರೂ.</verse>
				<verse number="2">ಎಡಬಲ ಕೈಗಳಿಂದ ಕಲ್ಲುಗಳನ್ನು ಎಸೆಯಲೂ, ಬಿಲ್ಲುಗಳಿಂದ ಬಾಣಗಳನ್ನು ಎಸೆಯಲೂ, ಇವರು ಬೆನ್ಯಾಮೀನನ ಗೋತ್ರದ ಸೌಲನ ಸಂಬಂಧಿಕರೂ ಆಗಿದ್ದರು.</verse>
				<verse number="3">ಅವರ ಮುಖ್ಯಸ್ಥ ಅಹೀಗೆಜೆರ್, ಇವನ ನಂತರ ಯೋವಾಷ್. ಇವರಿಬ್ಬರೂ ಗಿಬೆಯ ಊರಿನ ಶೇಮಾನ ಪುತ್ರರು. ಅಜ್ಮಾವೆತನ ಪುತ್ರರಾದ ಯೆಜಿಯೇಲ್ ಮತ್ತು ಪೆಲೆಟ್, ಅನಾತೋತ್ ಊರಿನವರಾದ ಬೆರಾಕಾ, ಯೇಹು.</verse>
				<verse number="4">ಗಿಬ್ಯೋನ್ಯನಾದ ಇಷ್ಮಾಯನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿಯಾಗಿದ್ದ ಮತ್ತು ಮೂವತ್ತು ಮಂದಿಯ ಮುಖ್ಯಸ್ಥನಾಗಿದ್ದ; ಯೆರೆಮೀಯ, ಯಹಜಿಯೇಲ್, ಯೋಹಾನಾನ್, ಗೆದೇರದವನಾದ ಯೋಜಾಬಾದ್,</verse>
				<verse number="5">ಎಲ್ಲೂಜೈ, ಯೆರೀಮೋತ್, ಬೆಯಲ್ಯ, ಶೆಮರ್ಯ, ಹರುಫ್ಯನಾದ ಶೆಫಟ್ಯ,</verse>
				<verse number="6">ಕೋರಹಿಯರಾದ ಎಲ್ಕಾನ, ಇಷ್ಷೀಯ, ಅಜರಯೇಲ್, ಯೋವೆಜೆರ್, ಯಾಷೊಬ್ಬಾಮ,</verse>
				<verse number="7">ಗೆದೋರಿನಲ್ಲಿರುವ ಯೆರೋಹಾಮನ ಪುತ್ರರಾದ ಯೋಯೇಲಹ, ಜೆಬದ್ಯ.</verse>
				<verse number="8">ಇದಲ್ಲದೆ ಮರುಭೂಮಿಯಲ್ಲಿ ಬಲವಾದ ಸ್ಥಳದಲ್ಲಿರುವ ದಾವೀದನ ಬಳಿಯಲ್ಲಿ ತಮ್ಮನ್ನು ಪ್ರತ್ಯೇಕಿಸಿಕೊಂಡಿದ್ದ ಗಾದ್ಯರು ಇದ್ದರು. ಇವರು ಖೇಡ್ಯವನ್ನೂ, ಭಲ್ಲೆಯನ್ನೂ ಹಿಡಿದು ಪರಾಕ್ರಮಶಾಲಿಗಳಾಗಿಯೂ, ಯುದ್ಧಕ್ಕೆ ತಕ್ಕ ಸೈನಿಕರಾಗಿಯೂ ಇದ್ದರು. ಅವರ ಮುಖಗಳು ಸಿಂಹಗಳಂತೆ ಭೀಕರವಾಗಿದ್ದವು. ಪರ್ವತಗಳ ಮೇಲೆ ಇವರು ಜಿಂಕೆಗಳ ಹಾಗೆ ವೇಗವುಳ್ಳವರಾಗಿದ್ದರು.</verse>
				<verse number="9">ಅಧಿಕಾರದಲ್ಲಿ ಏಜೆರ್ ಮುಖ್ಯಸ್ಥನು; ಎರಡನೆಯವನು ಓಬದ್ಯ; ಮೂರನೆಯವನು ಎಲೀಯಾಬ್;</verse>
				<verse number="10">ನಾಲ್ಕನೆಯವನು ಮಿಷ್ಮನ್ನ, ಐದನೆಯವನು ಯೆರೆಮೀಯ;</verse>
				<verse number="11">ಆರನೆಯವನು ಅತ್ತೈ; ಏಳನೆಯವನು ಎಲೀಯೇಲ್;</verse>
				<verse number="12">ಎಂಟನೆಯವನು ಯೋಹಾನಾನ್, ಒಂಬತ್ತನೆಯವನು ಎಲ್ಜಾಬಾದ್;</verse>
				<verse number="13">ಹತ್ತನೆಯವನು ಯೆರೆಮೀಯ; ಹನ್ನೊಂದನೆಯವನು ಮಕ್ಬನ್ನೈ.</verse>
				<verse number="14">ಗಾದನ ಪುತ್ರರಾದ ಇವರು ಸೈನ್ಯದಲ್ಲಿ ಅಧಿಪತಿಗಳಾಗಿದ್ದರು. ಕಿರಿಯನು ನೂರು ಮಂದಿಯ ಮೇಲೆಯೂ ಹಿರಿಯನು ಸಾವಿರ ಮಂದಿಯ ಮೇಲೆಯೂ ಇದ್ದರು.</verse>
				<verse number="15">ಇವರು ಮೊದಲನೆಯ ತಿಂಗಳಲ್ಲಿ ಯೊರ್ದನ್ ಹೊಳೆ ದಡಮೀರಿ ಹರಿಯುತ್ತಿದ್ದಾಗ, ಅದನ್ನು ದಾಟಿ ಪೂರ್ವ ಕಡೆಯಲ್ಲಿಯೂ, ಪಶ್ಚಿಮ ಕಡೆಯಲ್ಲಿಯೂ ತಗ್ಗುಗಳಲ್ಲಿ ಇರುವವರೆಲ್ಲರನ್ನು ಓಡಿಸಿಬಿಟ್ಟರು.</verse>
				<verse number="16">ಬೆನ್ಯಾಮೀನನ ಮತ್ತು ಯೆಹೂದ್ಯರಲ್ಲಿ ಕೆಲವರು ಕೋಟೆಯ ಸ್ಥಳದಲ್ಲಿದ್ದ ದಾವೀದನ ಬಳಿಗೆ ಬಂದರು.</verse>
				<verse number="17">ಆಗ ದಾವೀದನು ಅವರನ್ನು ಎದುರುಗೊಳ್ಳಲು ಹೊರಟುಹೋಗಿ ಅವರಿಗೆ ಉತ್ತರವಾಗಿ, “ನನಗೆ ಸಹಾಯವಾಗಿ ನನ್ನ ಬಳಿಗೆ ನೀವು ಸಮಾಧಾನವಾಗಿ ಬಂದರೆ, ನನ್ನ ಹೃದಯವು ನಿಮ್ಮ ಸಂಗಡ ಒಂದಾಗಿರುವುದು. ಆದರೆ ದೋಷವು ನನ್ನ ಕೈಯಲ್ಲಿ ಇಲ್ಲದಿರುವಾಗ, ನೀವು ನನ್ನ ವೈರಿಗಳಿಗೆ ನನ್ನನ್ನು ಮೋಸದಿಂದ ಒಪ್ಪಿಸಿಕೊಡಲು ಬಂದರೆ, ನಮ್ಮ ಪಿತೃಗಳ ದೇವರು ನೋಡಿ ನ್ಯಾಯತೀರಿಸಲಿ,” ಎಂದನು.</verse>
				<verse number="18">ಆಗ ಆತ್ಮವು ಮೂವತ್ತು ಮಂದಿ ಅಧಿಪತಿಗಳ ಮುಖ್ಯಸ್ಥನಾದ ಅಮಾಸೈಯ ಮೇಲೆ ಬಂತು. ಅವನು ಹೀಗೆ ಹೇಳಿದನು, “ದಾವೀದನೇ, ನಾವು ನಿನ್ನವರು. ಇಷಯನ ಮಗನೇ, ನಾವು ನಿನ್ನ ಜೊತೆಯಿದ್ದೇವೆ; ಜಯವು ನಿನ್ನದೇ, ನಿನಗೆ ಸಹಾಯ ಮಾಡುವವರಿಗೆ ಜಯವು; ಏಕೆಂದರೆ ನಿನ್ನ ದೇವರು ನಿನಗೆ ಸಹಾಯ ಮಾಡುತ್ತಾರೆ.” ಆಗ ದಾವೀದನು ಅವರನ್ನು ಅಂಗೀಕರಿಸಿ, ಅವರನ್ನು ದಂಡಿನ ಅಧಿಪತಿಗಳಾಗಿ ಮಾಡಿದನು.</verse>
				<verse number="19">ದಾವೀದನು ಸೌಲನ ಮೇಲೆ ಯುದ್ಧಮಾಡಲು ಫಿಲಿಷ್ಟಿಯರ ಸಂಗಡ ಬರುತ್ತಿರುವಾಗ, ಮನಸ್ಸೆಯವರಲ್ಲಿ ಕೆಲವರು ದಾವೀದನ ಕಡೆಗೆ ಸೇರಿದರು. ಆದರೆ ಇವರು ಅವರಿಗೆ ಸಹಾಯ ಕೊಡದೆ ಇದ್ದರು. ಏಕೆಂದರೆ ಫಿಲಿಷ್ಟಿಯರ ಅಧಿಪತಿಗಳು ಯೋಚನೆ ಮಾಡಿದ ತರುವಾಯ, “ಅವನು ನಮಗೆ ಮೋಸಮಾಡಿ, ತನ್ನ ಯಜಮಾನನಾದ ಸೌಲನ ಕಡೆಗೆ ಸೇರಿದರೆ, ನಮ್ಮ ತಲೆಗಳು ಬಿದ್ದು ಹೋಗುವುವು,” ಎಂದು ಹೇಳಿ ಅವನನ್ನು ಕಳುಹಿಸಿಬಿಟ್ಟರು.</verse>
				<verse number="20">ದಾವೀದನು ಹಿಂದಿರುಗಿ ಚಿಕ್ಲಗಿಗೆ ಹಿಂದಿರುಗುತ್ತಿದ್ದಾಗ ಅವನೊಂದಿಗೆ ಮನಸ್ಸೆ ಗೋತ್ರದ ಸಹಸ್ರಾಧಿಪತಿಗಳಾದ ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹು, ಚಿಲ್ಲೆತೈ ಎಂಬವರು ಬಂದು ಸೇರಿಕೊಂಡರು.</verse>
				<verse number="21">ಇವರು ಗುಂಪಿಗೆ ವಿರೋಧವಾಗಿ ದಾವೀದನಿಗೆ ಸಹಾಯಕರಾಗಿದ್ದರು; ಅವರೆಲ್ಲರೂ ಬಲವುಳ್ಳ ಪರಾಕ್ರಮಶಾಲಿಗಳಾಗಿಯೂ ದಂಡಿನ ಪ್ರಧಾನರಾಗಿಯೂ ಇದ್ದರು.</verse>
				<verse number="22">ಅದೇ ಕಾಲದಲ್ಲಿ ದಿನೇ ದಿನೇ ದೊಡ್ಡ ಸೈನ್ಯವು ದೇವರ ಸೈನ್ಯದ ಹಾಗೆ ಆಗುವವರೆಗೆ, ದಾವೀದನಿಗೆ ಸಹಾಯ ಕೊಡುವುದಕ್ಕೆ ಅವನ ಕಡೆಗೆ ಬರುತ್ತಿದ್ದರು.</verse>
				<verse number="23">ಯೆಹೋವ ದೇವರ ವಾಕ್ಯದ ಪ್ರಕಾರ ಸೌಲನ ರಾಜ್ಯವನ್ನು ದಾವೀದನ ಕಡೆಗೆ ತಿರುಗಿಸುವುದಕ್ಕೆ, ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಯುದ್ಧಕ್ಕೆ ಆಯುಧಗಳನ್ನು ಧರಿಸಿಕೊಂಡು ಬಂದ ದಂಡುಗಳ ಸಂಖ್ಯೆ ಇದು:</verse>
				<verse number="24">ಖೇಡ್ಯವನ್ನೂ, ಭಲ್ಲೆಯನ್ನೂ ಹಿಡಿದುಕೊಂಡು, ಯುದ್ಧಕ್ಕೆ ಸಿದ್ಧರಾದ ಯೆಹೂದನ ಮಕ್ಕಳು 6,800 ಮಂದಿ.</verse>
				<verse number="25">ಯುದ್ಧಕ್ಕೆ ಪರಾಕ್ರಮಶಾಲಿಗಳಾದ ಸಿಮೆಯೋನನ ಮಕ್ಕಳಲ್ಲಿ 7,100 ಮಂದಿ.</verse>
				<verse number="26">ಲೇವಿಯ ಮಕ್ಕಳಲ್ಲಿ 4,600 ಮಂದಿ.</verse>
				<verse number="27">ಆರೋನಿಯರಲ್ಲಿ ಯೆಹೋಯಾದಾವನು ನಾಯಕನಾಗಿದ್ದನು. ಅವನ ಸಂಗಡ 3,700 ಮಂದಿ.</verse>
				<verse number="28">ಇದಲ್ಲದೆ ಬಲವುಳ್ಳ ಪರಾಕ್ರಮಶಾಲಿಯಾದ ಪ್ರಾಯಸ್ತನಾಗಿದ್ದ ಚಾದೋಕನೂ, ಅವನ ತಂದೆಯ ಮನೆಯಿಂದ 22 ಮಂದಿ ಪ್ರಧಾನರೂ.</verse>
				<verse number="29">ಸೌಲನ ಸಹೋದರರಾಗಿರುವ ಬೆನ್ಯಾಮೀನನ ಮಕ್ಕಳಲ್ಲಿ 3,000 ಮಂದಿ. ಇಂದಿನವರೆಗೂ ಅವರಲ್ಲಿ ಅನೇಕರು ಸೌಲನ ಮನೆಯ ವಿಚಾರಣೆಯನ್ನು ಮಾಡುತ್ತಿದ್ದರು.</verse>
				<verse number="30">ಎಫ್ರಾಯೀಮನ ಮಕ್ಕಳಲ್ಲಿ 20,800 ಮಂದಿ, ಬಲವುಳ್ಳ ಪರಾಕ್ರಮಶಾಲಿಗಳೂ, ತಮ್ಮ ಪಿತೃಗಳ ಮನೆಯಲ್ಲಿ ಹೆಸರುಗೊಂಡವರೂ ಆಗಿದ್ದರು.</verse>
				<verse number="31">ಮನಸ್ಸೆಯ ಅರ್ಧಗೋತ್ರದಲ್ಲಿ 18,000 ಮಂದಿ. ಅವರು ದಾವೀದನನ್ನು ಅರಸನಾಗಿ ಮಾಡಲು ಬಂದವರ ಹೆಸರು ಹೆಸರಾಗಿ ಹೇಳಲು ಆಯ್ಕೆಯಾದವರು.</verse>
				<verse number="32">ಇಸ್ಸಾಕಾರನ ಮಕ್ಕಳಲ್ಲಿ ಇಸ್ರಾಯೇಲರು ಮಾಡತಕ್ಕದ್ದು ಯಾವುದೆಂದು ತಿಳಿಯತಕ್ಕಂಥ ಕಾಲಗಳನ್ನು ಪರೀಕ್ಷಿಸಿ ತಿಳಿದವರು ಬಂದರು. ಅವರ ಯಜಮಾನರು 200 ಮಂದಿಯಾಗಿದ್ದರು. ಅವರ ಸಹೋದರರೆಲ್ಲರು ಇವರ ಆಜ್ಞಾಧೀನರಾಗಿದ್ದರು.</verse>
				<verse number="33">ಜೆಬುಲೂನನವರಲ್ಲಿ ದೃಢಹೃದಯದಿಂದ ಸಾಲಾಗಿ ನಡೆಯುವ ಸಕಲ ಆಯುಧಗಳನ್ನು ಧರಿಸಿಕೊಂಡ ಯುದ್ಧ ನಿಪುಣರಾದ ಸೈನ್ಯವಾಗಿ ಹೊರಡುವವರು 50,000 ಮಂದಿ.</verse>
				<verse number="34">ನಫ್ತಾಲಿಯವರಲ್ಲಿ 1,000 ಜನ ನಾಯಕರೂ ಗುರಾಣಿಬರ್ಜಿಗಳನ್ನು ಹಿಡಿದಿರುವ 37,000 ಸೈನಿಕರೂ</verse>
				<verse number="35">ದಾನನವರಲ್ಲಿ 28,600 ಮಂದಿ ಯುದ್ಧ ನಿಪುಣರು.</verse>
				<verse number="36">ಆಶೇರನವರಲ್ಲಿ ಯುದ್ಧಕ್ಕೆ ಹೋಗತಕ್ಕ ಹಾಗೆ ಯುದ್ಧ ನಿಪುಣರು ಸೈನ್ಯವಾಗಿ ಹೋಗುವವರು 40,000 ಮಂದಿ.</verse>
				<verse number="37">ಯೊರ್ದನ್ ನದಿ ಆಚೆಯಲ್ಲಿರುವ ರೂಬೇನ್ಯರಲ್ಲಿಯೂ, ಗಾದ್ಯರಲ್ಲಿಯೂ, ಮನಸ್ಸೆಯ ಅರ್ಧ ಗೋತ್ರದಲ್ಲಿಯೂ ಯುದ್ಧಕ್ಕೆ ತಕ್ಕಂಥ ಸಕಲ ಆಯುಧಗಳನ್ನು ಧರಿಸಿಕೊಂಡವರು 1,20,000 ಮಂದಿ.</verse>
				<verse number="38">ಯುದ್ಧಕ್ಕೆ ಸಿದ್ಧರಾದ ಈ ಸಮಸ್ತ ಸೈನಿಕರು ದಾವೀದನನ್ನು ಸಮಸ್ತ ಇಸ್ರಾಯೇಲರ ಮೇಲೆ ಅರಸನಾಗಿ ಮಾಡಲು ಹೆಬ್ರೋನಿಗೆ ಪೂರ್ಣಮನಸ್ಸಿನಿಂದ ಬಂದರು. ಇದಲ್ಲದೆ ಇಸ್ರಾಯೇಲಿನಲ್ಲಿದ್ದ ಮಿಕ್ಕಾದವರೆಲ್ಲರು ದಾವೀದನನ್ನು ಅರಸನಾಗಿ ಮಾಡಲು ಒಂದೇ ಮನಸ್ಸುಳ್ಳವರಾಗಿದ್ದರು.</verse>
				<verse number="39">ಅವರು ಅಲ್ಲಿ ದಾವೀದನ ಸಂಗಡ ಮೂರು ದಿವಸ ಅವರ ಕುಟುಂಬದವರು ಅವರಿಗೋಸ್ಕರ ಸಿದ್ಧಮಾಡಿದ ಆಹಾರವನ್ನು ತಿನ್ನುತ್ತಾ, ಕುಡಿಯುತ್ತಾ ಇದ್ದರು.</verse>
				<verse number="40">ಇದಲ್ಲದೆ ಅವರ ನೆರೆಯವನಾದ ಇಸ್ಸಾಕಾರ್, ಜೆಬುಲೂನ್, ನಫ್ತಾಲಿಯರು ಮೊದಲುಗೊಂಡು ಎಲ್ಲರೂ ತಮ್ಮ ಎತ್ತು, ಕತ್ತೆ, ಹೇಸರಗತ್ತೆ ಮತ್ತು ಒಂಟೆಗಳ ಮೇಲೆಯೂ ರೊಟ್ಟಿಗಳನ್ನೂ ಆಹಾರವನ್ನೂ, ಹಿಟ್ಟನ್ನೂ ಅಂಜೂರದ ಉಂಡೆಗಳನ್ನೂ ಒಣಗಿದ ದ್ರಾಕ್ಷಿ ಗೊಂಚಲುಗಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ದನಕುರಿಗಳನ್ನೂ ಬಹಳವಾಗಿ ತಂದರು. ಇಸ್ರಾಯೇಲಿನಲ್ಲಿ ಸಂತೋಷವಿತ್ತು.</verse>
			</chapter>
			<chapter number="13">
				<verse number="1">ದಾವೀದನು ಸಾವಿರ ಮಂದಿಗೂ, ನೂರು ಮಂದಿಗೂ ಪ್ರಧಾನರಾದವರ ಸಂಗಡ, ಎಲ್ಲಾ ನಾಯಕರ ಸಂಗಡ ಆಲೋಚನೆ ಮಾಡಿದನು.</verse>
				<verse number="2">ದಾವೀದನು ಇಸ್ರಾಯೇಲಿನ ಸಮಸ್ತ ಜನರಿಗೆ, “ನಿಮಗೆ ಒಳ್ಳೆಯದಾಗಿ ಕಂಡರೆ, ನಮ್ಮ ದೇವರಾದ ಯೆಹೋವ ದೇವರ ಚಿತ್ತವಾದರೆ, ನಮ್ಮ ಬಳಿಯಲ್ಲಿ ಕೂಡಿಬರುವ ಹಾಗೆ ಇಸ್ರಾಯೇಲಿನ ದೇಶವೆಲ್ಲದರಲ್ಲಿ ಉಳಿದಿರುವ ನಮ್ಮ ಸಹೋದರರನ್ನೂ, ತಮ್ಮ ಪಟ್ಟಣಗಳಲ್ಲಿ ಮತ್ತು ಉಪನಗರಗಳಲ್ಲಿ ಇರುವ ಯಾಜಕರನ್ನೂ, ಲೇವಿಯರನ್ನೂ ಎಲ್ಲಾ ಕಡೆಯಿಂದ ಕರೆಯಕಳುಹಿಸಿ,</verse>
				<verse number="3">ನಮ್ಮ ದೇವರ ಮಂಜೂಷವನ್ನು ನಮ್ಮ ಬಳಿಗೆ ತಿರುಗಿ ತರಿಸೋಣ. ಸೌಲನ ದಿವಸಗಳಲ್ಲಿ ಅದನ್ನು ವಿಚಾರಿಸಲಿಲ್ಲ,” ಎಂದನು.</verse>
				<verse number="4">ಹಾಗೆಯೇ ಮಾಡೋಣ ಎಂದು ಕೂಟದವರೆಲ್ಲರೂ ಹೇಳಿದರು. ಏಕೆಂದರೆ ಆ ಕಾರ್ಯವು ಸಮಸ್ತ ಜನರ ದೃಷ್ಟಿಗೆ ಯುಕ್ತವಾಗಿತ್ತು.</verse>
				<verse number="5">ಹೀಗೆ ದೇವರ ಮಂಜೂಷವನ್ನು ಕಿರ್ಯತ್ ಯಾರೀಮಿನಿಂದ ತರುವುದಕ್ಕೆ ದಾವೀದನು ಈಜಿಪ್ಟಿನ ಶೀಹೋರ್ ನದಿ ಮೊದಲ್ಗೊಂಡು ಲಿಬೋ ಹಮಾತಿನ ಪ್ರದೇಶದವರೆಗೆ ಇರುವ ಸಮಸ್ತ ಇಸ್ರಾಯೇಲರನ್ನು ಕೂಡಿಸಿದನು.</verse>
				<verse number="6">ಆಗ ಕೆರೂಬಿಗಳ ನಡುವೆ ವಾಸವಾಗಿರುವ ಯೆಹೋವ ದೇವರ ಹೆಸರಿನಿಂದ ಕರೆಯಲಾದ ದೇವರ ಮಂಜೂಷವನ್ನು ತೆಗೆದುಕೊಂಡು ಬರಲು, ದಾವೀದನೂ, ಸಮಸ್ತ ಇಸ್ರಾಯೇಲರೂ ಯೆಹೂದಕ್ಕೆ ಸೇರಿದ ಕಿರ್ಯತ್ ಯಾರೀಮಿನ ಬಾಲಾ ಎಂಬಲ್ಲಿಗೆ ಹೋದರು.</verse>
				<verse number="7">ಅವರು ಅಬೀನಾದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು, ಅದನ್ನು ಹೊಸ ಬಂಡಿಯ ಮೇಲೆ ಏರಿಸಿದರು. ಉಜ್ಜನು ಹಾಗೂ ಅಹಿಯೋವನು ಆ ಹೊಸ ಬಂಡಿಯನ್ನು ನಡೆಸಿದರು.</verse>
				<verse number="8">ಆಗ ದಾವೀದನೂ, ಸಮಸ್ತ ಇಸ್ರಾಯೇಲರೂ ಸಕಲ ವಾದ್ಯಗಳಾದ ಕಿನ್ನರಿ, ವೀಣೆ, ದಮ್ಮಡಿ, ತಾಳ, ತುತೂರಿ ಇವುಗಳನ್ನು ತಮ್ಮ ಸಮಸ್ತ ಬಲದಿಂದ ಬಾರಿಸುತ್ತಾ, ಹಾಡುತ್ತಾ ದೇವರ ಮುಂದೆ ಹೋದರು.</verse>
				<verse number="9">ಆದರೆ ಅವರು ಕಿದೋನನ ಕಣದ ಬಳಿಗೆ ಬಂದಾಗ, ಎತ್ತುಗಳು ಎಡವಿದ್ದರಿಂದ ಉಜ್ಜನು ತನ್ನ ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.</verse>
				<verse number="10">ಉಜ್ಜನು ಮಂಜೂಷದ ಮೇಲೆ ಕೈ ಹಾಕಿದ್ದರಿಂದ ಯೆಹೋವ ದೇವರು ಉಜ್ಜನ ಮೇಲೆ ಕೋಪಗೊಂಡು ಅವನನ್ನು ಶಿಕ್ಷಿಸಿದರು. ಅವನು ಅಲ್ಲಿಯೇ ದೇವರ ಮುಂದೆ ಮರಣಹೊಂದಿದನು.</verse>
				<verse number="11">ಯೆಹೋವ ದೇವರು ಉಜ್ಜನನ್ನು ಶಿಕ್ಷಿಸಿದ್ದರಿಂದ ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು, ಇಂದಿನವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಕರೆಯಲಾಗುತ್ತದೆ.</verse>
				<verse number="12">ದಾವೀದನು ಆ ದಿನ ಯೆಹೋವ ದೇವರಿಗೆ ಭಯಪಟ್ಟು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ಹೇಗೆ ತೆಗೆದುಕೊಂಡು ಹೋಗುವದು?” ಎಂದನು.</verse>
				<verse number="13">ಹಾಗೆಯೇ ದಾವೀದನು ಮಂಜೂಷವನ್ನು ದಾವೀದನ ಪಟ್ಟಣಕ್ಕೆ ತನ್ನ ಬಳಿಗೆ ಸೇರಿಸಿಕೊಳ್ಳದೆ, ಗಿತ್ತೀಯನಾದ ಓಬೇದ್ ಏದೋಮನ ಮನೆಗೆ ತೆಗೆದುಕೊಂಡು ಹೋದನು.</verse>
				<verse number="14">ದೇವರ ಮಂಜೂಷವು ಓಬೇದ್ ಏದೋಮನ ಮನೆಯಲ್ಲಿ ಮೂರು ತಿಂಗಳು ಇದ್ದುದರಿಂದ, ಯೆಹೋವ ದೇವರು ಓಬೇದ್ ಎದೋಮನನ್ನೂ, ಅವನ ಮನೆಯವರೆಲ್ಲರನ್ನೂ, ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದರು.</verse>
			</chapter>
			<chapter number="14">
				<verse number="1">ಟೈರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಮತ್ತು ಕಲ್ಲುಕುಟಿಗರನ್ನು ಕಳುಹಿಸಿದನು.</verse>
				<verse number="2">ಆಗ ದಾವೀದನು, ತನ್ನನ್ನು ಯೆಹೋವ ದೇವರು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದರೆಂದೂ, ತಮ್ಮ ಜನರಾದ ಇಸ್ರಾಯೇಲರ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದರೆಂದೂ ತಿಳಿದುಕೊಂಡನು.</verse>
				<verse number="3">ದಾವೀದನು ಯೆರೂಸಲೇಮಿನಲ್ಲಿ ಸಹ ಕೆಲವು ಸ್ತ್ರೀಯರನ್ನು ಮದುವೆಮಾಡಿಕೊಂಡನು. ಇನ್ನೂ ಹೆಚ್ಚು ಪುತ್ರ, ಪುತ್ರಿಯರನ್ನೂ ಪಡೆದನು.</verse>
				<verse number="4">ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,</verse>
				<verse number="5">ಇಬ್ಹಾರ್, ಎಲೀಷೂವ, ಎಲ್ಪೆಲೆಟ,</verse>
				<verse number="6">ನೋಗಹ, ನೆಫೆಗ್, ಯಾಫೀಯ,</verse>
				<verse number="7">ಎಲೀಷಾಮ, ಎಲ್ಯಾದ, ಎಲೀಫೆಲೆಟ್.</verse>
				<verse number="8">ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಹೊಂದಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ, ಫಿಲಿಷ್ಟಿಯರೆಲ್ಲರೂ ದಾವೀದನನ್ನು ಸೆರೆಹಿಡಿಯಲು ಹೋದರು. ದಾವೀದನು ಅದನ್ನು ಕೇಳಿ ಅವರಿಗೆದುರಾಗಿ ಹೊರಟನು.</verse>
				<verse number="9">ಆಗ ಫಿಲಿಷ್ಟಿಯರು ಬಂದು ರೆಫಾಯಿಮ್ ತಗ್ಗಿನಲ್ಲಿ ಇಳಿದುಕೊಂಡರು.</verse>
				<verse number="10">ಅದಕ್ಕೆ ದಾವೀದನು, “ನಾನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಬಹುದೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವಿರೋ?” ಎಂದು ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು ಅವನಿಗೆ, “ಹೋಗು, ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದು ಹೇಳಿದರು.</verse>
				<verse number="11">ಹಾಗೆಯೇ ದಾವೀದನು ಮತ್ತು ಅವನ ಸಂಗಡಿಗರೂ ಬಾಳ್ ಪೆರಾಜಿಮ್ ಎಂಬಲ್ಲಿಗೆ ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಆಗ ದಾವೀದನು, “ಪ್ರವಾಹವು ಕೊಚ್ಚಿಕೊಂಡು ಹೋಗುವಹಾಗೆ, ದೇವರು ನನ್ನ ಕೈಯಿಂದ ನನ್ನ ಶತ್ರುಗಳನ್ನು ನಾಶಮಾಡಿದ್ದಾರೆ,” ಎಂದನು. ಆದಕಾರಣ ಆ ಸ್ಥಳಕ್ಕೆ ಬಾಳ್ ಪೆರಾಜಿಮ್ ಎಂದು ಹೆಸರಿಟ್ಟನು.</verse>
				<verse number="12">ಅಲ್ಲಿ ಫಿಲಿಷ್ಟಿಯರು ತಮ್ಮ ದೇವರುಗಳನ್ನು ಬಿಟ್ಟು ಹೋದುದರಿಂದ, ದಾವೀದನು ಅವುಗಳನ್ನು ಸುಟ್ಟುಹಾಕಬೇಕೆಂದು ಅಪ್ಪಣೆಮಾಡಿದನು.</verse>
				<verse number="13">ಫಿಲಿಷ್ಟಿಯರು ಮತ್ತೆ ತಿರುಗಿಬಂದು ತಗ್ಗಿನಲ್ಲಿ ಸುಲಿಗೆಮಾಡಲು ಪ್ರಾರಂಭಿಸಿದರು.</verse>
				<verse number="14">ಆದ್ದರಿಂದ ದಾವೀದನು ತಿರುಗಿ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ, “ನೀನು ಅವರ ಹಿಂದೆ ಹೋಗದೆ, ಅವರನ್ನು ಬಿಟ್ಟು ತಿರುಗಿಕೊಂಡು ಹೋಗಿ, ಬಾಕಾಮರಗಳಿಗೆ ಎದುರಾಗಿ ಅವರ ಮೇಲೆ ದಾಳಿಮಾಡು.</verse>
				<verse number="15">ಬಾಕಾಮರಗಳ ತುದಿಗಳಲ್ಲಿ ನಡೆದುಬರುವ ಶಬ್ದವನ್ನು ನೀನು ಕೇಳಿದಾಗಲೇ, ದೇವರು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು,” ಎಂದರು.</verse>
				<verse number="16">ಆಗ ದಾವೀದನು, ದೇವರು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ, ಅವನು ಗಿಬ್ಯೋನಿನಿಂದ ಗೆಜೆರಿನವರೆಗೆ ಫಿಲಿಷ್ಟಿಯರ ದಂಡನ್ನು ಸಂಹರಿಸಿದರು.</verse>
				<verse number="17">ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು. ಯೆಹೋವ ದೇವರು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದರು.</verse>
			</chapter>
			<chapter number="15">
				<verse number="1">ದಾವೀದನ ಪಟ್ಟಣಗಳಲ್ಲಿ ದಾವೀದನು ತನಗೆ ಮನೆಗಳನ್ನು ಕಟ್ಟಿಸಿಕೊಂಡು, ದೇವರ ಮಂಜೂಷಕ್ಕೋಸ್ಕರ ಸ್ಥಳಗಳನ್ನು ಸಿದ್ಧಮಾಡಿ, ಅದರ ನಿಮಿತ್ತ ಗುಡಾರ ಹಾಕಿದನು.</verse>
				<verse number="2">ಆಗ ದಾವೀದನು, “ಲೇವಿಯರ ಹೊರತಾಗಿ ಮತ್ತ್ಯಾರೂ ದೇವರ ಮಂಜೂಷವನ್ನು ಹೊರಬಾರದು. ಯೆಹೋವ ದೇವರು ದೇವರ ಮಂಜೂಷವನ್ನು ಹೊರಲೂ, ಯುಗಯುಗಕ್ಕೆ ಅವರಿಗೆ ಸೇವೆಮಾಡಲೂ ಅವರನ್ನು ಆಯ್ದುಕೊಂಡಿದ್ದಾರೆ,” ಎಂದನು.</verse>
				<verse number="3">ದಾವೀದನು ಯೆಹೋವ ದೇವರ ಮಂಜೂಷವನ್ನು ತಾನು ಅದಕ್ಕೋಸ್ಕರ ಸಿದ್ಧಮಾಡಿದ ಅದರ ಸ್ಥಳಕ್ಕೆ ತೆಗೆದುಕೊಂಡು ಬರುವ ನಿಮಿತ್ತ, ಯೆರೂಸಲೇಮಿಗೆ ಸಮಸ್ತ ಇಸ್ರಾಯೇಲರನ್ನು ಕೂಡಿಸಿ ಬರಮಾಡಿದನು.</verse>
				<verse number="4">ದಾವೀದನು ಆರೋನನ ಮಕ್ಕಳನ್ನೂ, ಲೇವಿಯರನ್ನೂ ಬರಮಾಡಿದನು.</verse>
				<verse number="5">ಕೊಹಾತನ ಪುತ್ರರಲ್ಲಿ ಮುಖ್ಯಸ್ಥನಾದ ಉರೀಯೇಲನೂ, ಅವನ ಸಹೋದರರಾದ 120 ಮಂದಿಯೂ;</verse>
				<verse number="6">ಮೆರಾರೀಯ ಪುತ್ರರಲ್ಲಿ ಮುಖ್ಯಸ್ಥನಾದ ಅಸಾಯನೂ, ಅವನ ಸಹೋದರರಾದ 220 ಮಂದಿಯೂ;</verse>
				<verse number="7">ಗೇರ್ಷೋಮನ ಪುತ್ರರಲ್ಲಿ ಮುಖ್ಯಸ್ಥನಾದ ಯೋಯೇಲನೂ ಅವನ ಸಹೋದರರಾದ 130 ಮಂದಿಯೂ;</verse>
				<verse number="8">ಎಲೀಚಾಫಾನನ ಪುತ್ರರಲ್ಲಿ ಮುಖ್ಯಸ್ಥನಾದ ಶೆಮಾಯನೂ, ಅವನ ಸಹೋದರರಾದ 200 ಮಂದಿಯೂ;</verse>
				<verse number="9">ಹೆಬ್ರೋನನ ಪುತ್ರರಲ್ಲಿ ಮುಖ್ಯಸ್ಥನಾದ ಎಲೀಯೇಲನೂ, ಅವನ ಸಹೋದರರಾದ 80 ಮಂದಿಯೂ;</verse>
				<verse number="10">ಉಜ್ಜೀಯೇಲನ ಪುತ್ರರಲ್ಲಿ ಮುಖ್ಯಸ್ಥನಾದ ಅಮ್ಮೀನಾದಾಬನೂ, ಅವನ ಸಹೋದರರಾದ 112 ಮಂದಿಯು.</verse>
				<verse number="11">ಆಗ ದಾವೀದನು ಚಾದೋಕನು, ಅಬಿಯಾತರನು ಎಂಬ ಯಾಜಕರನ್ನೂ; ಉರೀಯೇಲನು, ಅಸಾಯನು, ಯೋಯೇಲನು, ಶೆಮಾಯನು, ಎಲೀಯೇಲನು, ಅಮ್ಮೀನಾದಾಬನು ಎಂಬ ಲೇವಿಯರನ್ನೂ ಕರೆಕಳುಹಿಸಿ ಅವರಿಗೆ,</verse>
				<verse number="12">“ನೀವು ಲೇವಿಯರ ಕುಟುಂಬಗಳಲ್ಲಿ ಮುಖ್ಯಸ್ಥರಾದ್ದರಿಂದ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮಂಜೂಷವನ್ನು ನಾನು ಅದಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ನೀವು ತರುವ ಹಾಗೆ ನಿಮ್ಮನ್ನೂ, ನಿಮ್ಮ ಸಹೋದರರನ್ನೂ ಪರಿಶುದ್ಧ ಮಾಡಿಕೊಳ್ಳಿರಿ.</verse>
				<verse number="13">ಏಕೆಂದರೆ ನೀವು ಮೊದಲು ಹಾಗೆ ಮಾಡದೆ ಇದ್ದುದರಿಂದ, ಕೋಪದಿಂದ ಯೆಹೋವ ದೇವರಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದರು. ಏಕೆಂದರೆ ನ್ಯಾಯದ ಪ್ರಕಾರ ನಾವು ಅವರನ್ನು ಹುಡುಕಲಿಲ್ಲ,” ಎಂದು ಹೇಳಿದನು.</verse>
				<verse number="14">ಇಸ್ರಾಯೇಲಿನ ದೇವರಾದ ಯೆಹೋವ ದೇವರ ಮಂಜೂಷವನ್ನು ತರುವುದಕ್ಕೆ ಯಾಜಕರೂ, ಲೇವಿಯರೂ ತಮ್ಮನ್ನು ಪರಿಶುದ್ಧ ಮಾಡಿಕೊಂಡರು.</verse>
				<verse number="15">ಮೋಶೆಯು ಆಜ್ಞಾಪಿಸಿದ ಯೆಹೋವ ದೇವರ ವಾಕ್ಯದ ಪ್ರಕಾರ ಲೇವಿಯರು ಕೋಲುಗಳನ್ನು ಹಾಕಿ, ದೇವರ ಮಂಜೂಷವನ್ನು ತಮ್ಮ ಹೆಗಲುಗಳ ಮೇಲೆ ಹೊತ್ತುಕೊಂಡು ಹೋದರು.</verse>
				<verse number="16">ಇದಲ್ಲದೆ ದಾವೀದನು ವಾದ್ಯಗಳನ್ನೂ ವಿಶೇಷವಾದ ವೀಣೆಗಳನ್ನೂ, ಕಿನ್ನರಿಗಳನ್ನೂ, ತಾಳಗಳನ್ನೂ ಬಾರಿಸಿ ಸಂತೋಷದಿಂದ ಸ್ವರವನ್ನೂ ಎತ್ತುವ ಹಾಗೆ, ತಮ್ಮ ಸಹೋದರರಲ್ಲಿ ಹಾಡುಗಾರರನ್ನು ನೇಮಿಸುವುದಕ್ಕೆ ಲೇವಿಯರ ಪ್ರಧಾನರಿಗೆ ಆಜ್ಞಾಪಿಸಿದನು.</verse>
				<verse number="17">ಹಾಗೆಯೇ ಲೇವಿಯರು ಯೋಯೇಲನ ಮಗನಾದ ಹೇಮಾನನನ್ನೂ, ಅವನ ಸಹೋದರರಲ್ಲಿ ಬೆರೆಕ್ಯನ ಮಗನಾದ ಆಸಾಫನನ್ನೂ, ಮೆರಾರೀಯ ಪುತ್ರರ ಸಂಬಂಧಿಕರಲ್ಲಿ ಕೂಷಾಯನ ಮಗ ಏತಾನನನ್ನೂ ನೇಮಿಸಿದರು.</verse>
				<verse number="18">ಅವರ ಸಂಗಡ ಎರಡನೆಯ ದರ್ಜೆಯವರಾದ ತಮ್ಮ ಸಹೋದರರಾಗಿರುವ ಜೆಕರ್ಯನನ್ನೂ ಬೇನನನ್ನೂ ಯಾಜೀಯೇಲನನ್ನೂ, ಶೆಮೀರಾಮೋತನನ್ನೂ ಯೆಹೀಯೇಲನನ್ನೂ, ಉನ್ನೀಯನ್ನೂ, ಎಲೀಯಾಬನನ್ನೂ, ಬೆನಾಯನನ್ನೂ, ಮಾಸೇಯನನ್ನೂ, ಮತ್ತಿತ್ಯನನ್ನೂ, ಎಲೀಫೆಲೇಹುನನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಓಬೇದ್ ಏದೋಮನನ್ನೂ ಯೆಹೀಯೇಲನನ್ನೂ ನೇಮಿಸಿದರು.</verse>
				<verse number="19">ಸಂಗೀತಗಾರರಾದ ಹೇಮಾನನೂ, ಆಸಾಫನೂ, ಏತಾನನೂ ಕಂಚಿನ ತಾಳಗಳನ್ನು ಬಾರಿಸುವವರು.</verse>
				<verse number="20">ಜೆಕರ್ಯ, ಅಜಿಯೇಲ್, ಶೆಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಮಾಸೇಯ, ಬೆನಾಯ ಎಂಬವರನ್ನು ಅಲಮೋತ್ ಎಂಬ ತಾರಸ್ಥಾಯಿಯ ವೀಣೆಗಳನ್ನು ಬಾರಿಸುವುದಕ್ಕೆ ಆರಿಸಿಕೊಂಡರು.</verse>
				<verse number="21">ಮತ್ತಿತ್ಯ, ಎಲೀಫೆಲೇಹು, ಮಿಕ್ನೇಯ, ಓಬೇದ್ ಏದೋಮ್, ಯೆಹೀಯೇಲ್, ಅಜಜ್ಯ ಎಂಬವರನ್ನು ಶೆಮಿನಿಥ್ ಎಂಬ ಮಂದ್ರಸ್ಥಾಯಿಯ ಕಿನ್ನರಿಗಳನ್ನು ಬಾರಿಸುವುದಕ್ಕೂ ನೇಮಿಸಿಕೊಂಡರು.</verse>
				<verse number="22">ಆದರೆ ಲೇವಿಯರ ಪ್ರಧಾನನಾದ ಕೆನನ್ಯನು ಹಾಡುವುದಕ್ಕೆ ನೇಮಕವಾದನು. ಅವನು ಸಂಗೀತದಲ್ಲಿ ನಿಪುಣನಾದ್ದರಿಂದ ಅವನು ಮುಖ್ಯಸ್ಥನಾಗಿದ್ದನು.</verse>
				<verse number="23">ಬೆರೆಕ್ಯ, ಎಲ್ಕಾನಾ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು.</verse>
				<verse number="24">ಯಾಜಕರಾದ ಶೆಬನ್ಯ, ಯೋಷಾಫಾಟ್, ನೆತನೆಯೇಲ್, ಅಮಾಸೈಯೂ, ಜೆಕರ್ಯನೂ, ಬೆನಾಯನೂ, ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು. ಓಬೇದ್ ಏದೋಮನೂ, ಯೆಹೀಯನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು.</verse>
				<verse number="25">ಹೀಗೆಯೇ ದಾವೀದನೂ, ಇಸ್ರಾಯೇಲಿನ ಹಿರಿಯರೂ, ಸಹಸ್ರಾಧಿಪತಿಗಳೂ ಸಂತೋಷವಾಗಿ ಓಬೇದ್ ಏದೋಮನ ಮನೆಯೊಳಗಿಂದ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತರಲು ಹೋದರು.</verse>
				<verse number="26">ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬರುತ್ತಿದ್ದ ಲೇವಿಯರಿಗೆ ದೇವರು ಸಹಾಯ ಮಾಡಿದ್ದರಿಂದ, ಅವರು ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಬಲಿಯಾಗಿ ಅರ್ಪಿಸಿದರು.</verse>
				<verse number="27">ದಾವೀದನೂ, ಮಂಜೂಷವನ್ನು ಹೊರುವ ಲೇವಿಯರೂ, ಹಾಡುಗಾರರೂ, ಸಂಗೀತಗಾರರ ನಾಯಕನಾದ ಕೆನನ್ಯನೂ ನಯವಾದ ನಾರಿನ ಮೇಲಂಗಿಯನ್ನು ಧರಿಸಿಕೊಂಡಿದ್ದರು. ಇದಲ್ಲದೆ ದಾವೀದನು ನಾರಿನ ಏಫೋದನ್ನು ಧರಿಸಿಕೊಂಡಿದ್ದನು.</verse>
				<verse number="28">ಹೀಗೆ ಇಸ್ರಾಯೇಲರೆಲ್ಲರೂ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಆರ್ಭಟದಿಂದಲೂ, ಕೊಂಬಿನ ಶಬ್ದದಿಂದಲೂ, ತುತೂರಿಗಳಿಂದಲೂ, ತಾಳಗಳಿಂದಲೂ ವೀಣೆಗಳನ್ನೂ, ಕಿನ್ನರಿಗಳನ್ನೂ ಬಾರಿಸುತ್ತಾ ತೆಗೆದುಕೊಂಡು ಬಂದರು.</verse>
				<verse number="29">ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ದಾವೀದನ ಪಟ್ಟಣದಲ್ಲಿ ಪ್ರವೇಶಿಸುವಾಗ, ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ನೋಡಿ, ಕುಣಿಯುತ್ತಾ, ಹಾಡುತ್ತಾ ಇರುವ ಅರಸನಾದ ದಾವೀದನನ್ನು ಕಂಡು, ತನ್ನ ಹೃದಯದಲ್ಲಿ ಅವನನ್ನು ತಿರಸ್ಕರಿಸಿದಳು.</verse>
			</chapter>
			<chapter number="16">
				<verse number="1">ಅವರು ದೇವರ ಮಂಜೂಷವನ್ನು ಒಳಗೆ ತಂದು, ದಾವೀದನು ಅದಕ್ಕೋಸ್ಕರ ಹಾಕಿದ ಗುಡಾರದೊಳಗೆ ಅದರ ನಿಯಮಿತ ಸ್ಥಳದಲ್ಲಿ ಅದನ್ನು ಇಟ್ಟ ತರುವಾಯ, ಅವರು ದೇವರ ಸನ್ನಿಧಿಯಲ್ಲಿ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದರು.</verse>
				<verse number="2">ದಾವೀದನು ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದ ತರುವಾಯ, ಅವನು ಯೆಹೋವ ದೇವರ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿ,</verse>
				<verse number="3">ಇಸ್ರಾಯೇಲಿನ ಪ್ರತಿಯೊಬ್ಬ ಪುರುಷನಿಗೂ ಸ್ತ್ರೀಗೂ, ಒಂದು ರೊಟ್ಟಿಯನ್ನೂ, ಖರ್ಜೂರದ ಉಂಡೆಯನ್ನೂ, ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಹಂಚಿದನು.</verse>
				<verse number="4">ಇದಲ್ಲದೆ ಯೆಹೋವ ದೇವರ ಮಂಜೂಷದ ಮುಂದೆ ಸೇವೆಮಾಡಲೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಸ್ಮರಿಸುವುದಕ್ಕೂ, ಕೊಂಡಾಡುವುದಕ್ಕೂ, ಹೊಗಳುವುದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು.</verse>
				<verse number="5">ಅವರು ಯಾರೆಂದರೆ: ಮುಖ್ಯಸ್ಥನಾದ ಆಸಾಫನೂ, ಅವನ ತರುವಾಯ ಜೆಕರ್ಯನೂ, ಯೆಜೀಯೇಲನೂ, ಶೆಮೀರಾಮೋತನೂ, ಯೆಹೀಯೇಲನೂ, ಮತ್ತಿತ್ಯನೂ, ಎಲೀಯಾಬನೂ, ಬೆನಾಯನೂ, ಓಬೇದ್ ಏದೋಮನೂ, ಯೆಹಿಯೇಲನೂ ಇವರು ವೀಣೆಗಳನ್ನೂ, ಕಿನ್ನರಿಗಳನ್ನೂ ಬಾರಿಸುತ್ತಿದ್ದರು. ಆದರೆ ಆಸಾಫನು ತಾಳಗಳನ್ನು ಬಾರಿಸುತ್ತಿದ್ದನು.</verse>
				<verse number="6">ಇದಲ್ಲದೆ ಯಾಜಕರಾದ ಬೆನಾಯನೂ, ಯಹಜಿಯೇಲನೂ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಯಾವಾಗಲೂ ತುತೂರಿಗಳನ್ನು ಊದುವವರಾಗಿದ್ದರು.</verse>
				<verse number="7">ಆಸಾಫನಿಗೂ, ಅವನ ಜೊತೆ ಲೇವಿಯರಿಗೂ ಯೆಹೋವ ದೇವರ ಸ್ತೋತ್ರಗೀತೆ ಹಾಡಲು ದಾವೀದನು ಪ್ರಥಮವಾಗಿ ಆ ದಿನದಲ್ಲೇ ನೇಮಿಸಿದನು. ಅವರು ಹೀಗೆಂದು ಹಾಡಿದರು:</verse>
				<verse number="8">ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ, ಅವರ ಹೆಸರನ್ನು ಸಾರಿ ಹೇಳಿರಿ, ಜನರಲ್ಲಿ ದೇವರ ಕ್ರಿಯೆಗಳನ್ನು ತಿಳಿಯಪಡಿಸಿರಿ.</verse>
				<verse number="9">ದೇವರಿಗೆ ಹಾಡಿರಿ, ದೇವರಿಗೆ ಕೀರ್ತನೆ ಹಾಡಿರಿ, ದೇವರ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.</verse>
				<verse number="10">ದೇವರ ಪರಿಶುದ್ಧ ನಾಮವನ್ನು ಹೊಗಳಿರಿ, ಯೆಹೋವ ದೇವರನ್ನು ಹುಡುಕುವವರ ಹೃದಯವು ಸಂತೋಷಿಸಲಿ.</verse>
				<verse number="11">ಯೆಹೋವ ದೇವರನ್ನೂ, ಅವರ ಬಲವನ್ನೂ ಆಶ್ರಯಿಸಿರಿ, ಅವರ ಮುಖವನ್ನು ಯಾವಾಗಲೂ ಹುಡುಕಿರಿ.</verse>
				<verse number="12">ದೇವರು ಮಾಡಿದ ಆಶ್ಚರ್ಯಕಾರ್ಯಗಳನ್ನೂ, ಅವರ ಅದ್ಭುತಗಳನ್ನೂ, ಅವರ ಬಾಯಿಂದ ಹೊರಟ ನ್ಯಾಯ ನಿರ್ಣಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.</verse>
				<verse number="13">ಅವರ ಸೇವಕನಾದ ಇಸ್ರಾಯೇಲಿನ ಸಂತತಿಯೇ, ಅವರು ಆಯ್ದುಕೊಂಡ ಯಾಕೋಬನ ಮಕ್ಕಳೇ,</verse>
				<verse number="14">ಅವರೇ ನಮ್ಮ ದೇವರಾದ ಯೆಹೋವ ಆಗಿದ್ದಾರೆ. ಅವರ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಇವೆ.</verse>
				<verse number="15">ದೇವರು ತಮ್ಮ ಒಡಂಬಡಿಕೆಯನ್ನೂ, ಸಾವಿರ ತಲಾಂತರಗಳಿಗೆ ಆಜ್ಞಾಪಿಸಿದ ತಮ್ಮ ಮಾತನ್ನೂ,</verse>
				<verse number="16">ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಇಸಾಕನಿಗೆ ಇಟ್ಟ ಆಣೆಯನ್ನೂ ಯುಗಯುಗಕ್ಕೂ ಜ್ಞಾಪಕಮಾಡಿಕೊಳ್ಳಿರಿ.</verse>
				<verse number="17">ದೇವರು ಅದನ್ನು ಯಾಕೋಬನಿಗೆ ತೀರ್ಪನ್ನಾಗಿ ದೃಢಪಡಿಸಿದರು, ಅವರು ಇಸ್ರಾಯೇಲರಿಗೆ ನಿತ್ಯ ಒಡಂಬಡಿಕೆಯಾಗಿ ಸ್ಥಾಪಿಸಿ ಹೇಳಿದ್ದೇನೆಂದರೆ:</verse>
				<verse number="18">“ನಾನು ನಿಮಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.”</verse>
				<verse number="19">ಆಗ ಅವರು ಅಲ್ಪಸಂಖ್ಯಾತರೂ, ಬಹು ಸ್ವಲ್ಪ ಮಂದಿಯಾಗಿಯೂ, ಪರದೇಶಸ್ಥರಾಗಿಯೂ ನಾಡಿನಲ್ಲಿ ಇದ್ದರು.</verse>
				<verse number="20">ಅವರು ಜನಾಂಗದಿಂದ ಜನಾಂಗಕ್ಕೂ, ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋಗುತ್ತಿದ್ದರು.</verse>
				<verse number="21">ಜನರು ಅವರಿಗೆ ಕೇಡು ಮಾಡದಂತೆ ದೇವರು ತಡೆದರು. ಹೌದು, ಅವರಿಗೋಸ್ಕರ ದೇವರು ಅರಸರನ್ನು ಗದರಿಸಿ:</verse>
				<verse number="22">ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ. ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.</verse>
				<verse number="23">ಸಮಸ್ತ ಭೂನಿವಾಸಿಗಳೇ, ಯೆಹೋವ ದೇವರಿಗೆ ಹಾಡಿರಿ. ಅವರ ರಕ್ಷಣೆಯನ್ನು ದಿನಂಪ್ರತಿ ಸಾರಿ ಹೇಳಿರಿ.</verse>
				<verse number="24">ಜನಾಂಗಗಳಲ್ಲಿ ಅವರ ಘನತೆಯನ್ನೂ, ಎಲ್ಲಾ ಜನಾಂಗಗಳಲ್ಲಿ ಅವರ ಅದ್ಭುತಗಳನ್ನೂ ವಿವರಿಸಿರಿ.</verse>
				<verse number="25">ಯೆಹೋವ ದೇವರು ಮಹೋನ್ನತರಾಗಿದ್ದಾರೆ, ಬಹು ಸ್ತುತಿಗೆ ಪಾತ್ರರೂ ಆಗಿದ್ದಾರೆ; ಅವರು ಎಲ್ಲಾ ದೇವರುಗಳಿಗಿಂತ ಬಹುಭಯಭಕ್ತಿಗೆ ಪಾತ್ರರಾಗಿದ್ದಾರೆ.</verse>
				<verse number="26">ಏಕೆಂದರೆ ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಯೆಹೋವ ದೇವರು ಆಕಾಶಮಂಡಲವನ್ನು ನಿರ್ಮಿಸಿದವರು.</verse>
				<verse number="27">ಅವರ ಸನ್ನಿಧಿಯಲ್ಲಿ ಘನತೆಯೂ ಪ್ರಭೆಯೂ; ಅವರ ಪರಿಶುದ್ಧ ಸ್ಥಳದಲ್ಲಿ ಬಲವೂ ಸಂತೋಷವೂ ಇವೆ.</verse>
				<verse number="28">ಜನಾಂಗದ ಕುಟುಂಬಗಳೇ, ಯೆಹೋವ ದೇವರ ಮುಂದೆ, ನೀವು ಮಹಿಮೆಯನ್ನೂ ಬಲವನ್ನೂ ಅರ್ಪಿಸಿರಿ.</verse>
				<verse number="29">ಯೆಹೋವ ದೇವರ ಹೆಸರಿಗೆ ಸಲ್ಲತಕ್ಕ ಗೌರವವನ್ನು ಸಲ್ಲಿಸಿರಿ; ಕಾಣಿಕೆಯನ್ನು ತೆಗೆದುಕೊಂಡು ದೇವರ ಸನ್ನಿಧಿಗೆ ಬನ್ನಿರಿ. ಪರಿಶುದ್ಧತೆ ಎಂಬ ಭೂಷಣದೊಡನೆ ಯೆಹೋವ ದೇವರನ್ನು ಆರಾಧಿಸಿರಿ.</verse>
				<verse number="30">ಸಮಸ್ತ ಭೂನಿವಾಸಿಗಳೇ, ಅವರ ಮುಂದೆ ಭಯಪಡಿರಿ. ಲೋಕವು ಸ್ಥಿರವಾಗಿರುವುದು, ಕದಲುವುದಿಲ್ಲ.</verse>
				<verse number="31">ಆಕಾಶವು ಸಂತೋಷಿಸಲಿ, ಭೂಮಿಯು ಉಲ್ಲಾಸಪಡಲಿ. ಯೆಹೋವ ದೇವರು ಆಳುತ್ತಾರೆಂದು ಜನಾಂಗಗಳಲ್ಲಿ ಹೇಳಲಿ.</verse>
				<verse number="32">ಸಮುದ್ರವೂ ಅದರಲ್ಲಿರುವುದೆಲ್ಲವೂ ಘೋಷಿಸಲಿ. ಹೊಲಗಳೂ ಅವುಗಳಲ್ಲಿರುವ ಸಮಸ್ತವೂ ಉತ್ಸಾಹಪಡಲಿ.</verse>
				<verse number="33">ಆಗ ಅಡವಿಯ ಮರಗಳೆಲ್ಲಾ ಯೆಹೋವ ದೇವರ ಮುಂದೆಯೇ ಉತ್ಸಾಹಧ್ವನಿ ಮಾಡಲಿ. ದೇವರು ಭೂಮಿಗೆ ನ್ಯಾಯತೀರಿಸಲು ಬರುತ್ತಾರೆ.</verse>
				<verse number="34">ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ. ಅವರು ಒಳ್ಳೆಯವರು; ಅವರ ಪ್ರೀತಿ ಶಾಶ್ವತವಾಗಿರುವುದು.</verse>
				<verse number="35">ನಮ್ಮ ರಕ್ಷಣೆಯ ದೇವರೇ, “ನಾವು ನಿಮ್ಮ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ, ನಿಮ್ಮ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ ನಮ್ಮನ್ನು ರಕ್ಷಿಸಿರಿ, ಜನಾಂಗಗಳೊಳಗಿಂದ ನಮ್ಮನ್ನು ಬಿಡುಗಡೆ ಮಾಡಿ ಒಂದುಗೂಡಿಸಿರಿ.”</verse>
				<verse number="36">ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯುಂಟಾಗಲಿ, ಜನರೆಲ್ಲರೂ, “ಆಮೆನ್,” ಎಂದು ಹೇಳಲಿ. ನೀವು, “ಯೆಹೋವ ದೇವರನ್ನು ಸ್ತುತಿಸಿರಿ,” ಎಂದು ಹೇಳಿದರು.</verse>
				<verse number="37">ಪ್ರತಿದಿನದ ಅವಶ್ಯಕತೆಗಳಿಗೆ ಅನುಗುಣವಾಗಿ ನಿಯಮಿತವಾಗಿ ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ಮುಂದೆ ಸೇವೆ ಸಲ್ಲಿಸಲು ದಾವೀದನು ಆಸಾಫ್ ಮತ್ತು ಅವನ ಸಹಚರರನ್ನು ನೇಮಿಸಿದನು.</verse>
				<verse number="38">ಓಬೇದ್ ಏದೋಮ್ ಮತ್ತು ಅವನ ಸಹಚರರಾದ ಅರವತ್ತೆಂಟು ಮಂದಿಯೂ, ದ್ವಾರಪಾಲಕರಾದ ಯೆದುತೂನನ ಮಗ ಓಬೇದ್ ಎದೋಮ್ ಮತ್ತು ಹೋಸ ನೇಮಕವಾಗಿದ್ದರು.</verse>
				<verse number="39">ಗಿಬ್ಯೋನಿನಲ್ಲಿರುವ ಉನ್ನತ ಸ್ಥಳದಲ್ಲಿ ಯೆಹೋವ ದೇವರ ಗುಡಾರದ ಮುಂದೆ ಸೇವೆಮಾಡುವದಕ್ಕೆ ದಾವೀದನು ಯಾಜಕನಾದ ಚಾದೋಕನನ್ನೂ ಮತ್ತು ಅವನ ಸಹೋದರರನ್ನು ನೇಮಿಸಿದನು.</verse>
				<verse number="40">ಯೆಹೋವ ದೇವರು ಇಸ್ರಾಯೇಲಿಗೆ ಆಜ್ಞಾಪಿಸಿದ ಮೋಶೆಯ ನಿಯಮದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡಲೂ ಅವರು ಪ್ರತಿದಿನವೂ ಉದಯಕಾಲದಲ್ಲಿ ಮತ್ತು ಸಾಯಂಕಾಲದಲ್ಲಿ ದಹನಬಲಿಪೀಠದ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸುತ್ತಿದ್ದರು.</verse>
				<verse number="41">“ದೇವರ ಪ್ರೀತಿ ನಿತ್ಯವಾಗಿ ನೆಲೆಗೊಂಡಿರುವುದು,” ಎಂದು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಹೇಮಾನನೂ, ಯೆದುತೂನನೂ ಹೆಸರು ಹೆಸರಾಗಿ ಆಯ್ಕೆಗೊಂಡು, ನೇಮಕರಾಗಿದ್ದರು.</verse>
				<verse number="42">ಅದರ ಸಂಗಡ ತುತೂರಿ ಊದಲು, ತಾಳ ಬಾರಿಸಲು, ದೇವರ ಗೀತವಾದ್ಯಗಳೂ ಸಹಿತವಾಗಿ ಹೇಮಾನನೂ, ಯೆದುತೂನನೂ ಮೇಲ್ವಿಚಾರಕರಾಗಿದ್ದರು. ಯೆದುತೂನನ ಪುತ್ರರು ದ್ವಾರಪಾಲಕರಾಗಿದ್ದರು.</verse>
				<verse number="43">ತರುವಾಯ ಜನರೆಲ್ಲರು ತಮ್ಮ ತಮ್ಮ ಮನೆಗೆ ಹೋದರು. ದಾವೀದನು ತನ್ನ ಕುಟುಂಬವನ್ನು ಆಶೀರ್ವದಿಸುವುದಕ್ಕೆ ಹೋದನು.</verse>
			</chapter>
			<chapter number="17">
				<verse number="1">ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ, ಒಂದು ದಿನ ದಾವೀದನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಆದರೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಗುಡಾರದಲ್ಲಿರುತ್ತದೆ,” ಎಂದನು.</verse>
				<verse number="2">ಆಗ ನಾತಾನನು ದಾವೀದನಿಗೆ, “ನಿನ್ನ ಹೃದಯದಲ್ಲಿ ಏನು ಇದೆಯೋ ಅದನ್ನು ಮಾಡು; ಏಕೆಂದರೆ ದೇವರು ನಿನ್ನ ಸಂಗಡ ಇದ್ದಾರೆ,” ಎಂದನು.</verse>
				<verse number="3">ಅದೇ ರಾತ್ರಿಯಲ್ಲಿ ಯೆಹೋವ ದೇವರ ವಾಕ್ಯವು ನಾತಾನನಿಗೆ ಉಂಟಾಗಿ ಹೇಳಿದ್ದೇನೆಂದರೆ:</verse>
				<verse number="4">“ನೀನು ಹೋಗಿ ನನ್ನ ಸೇವಕನಾದ ದಾವೀದನಿಗೆ, ‘ಯೆಹೋವ ದೇವರು ಹೇಳುವುದೇನೆಂದರೆ: ನಾನು ವಾಸವಾಗಿರುವುದಕ್ಕೆ ನೀನು ನನಗೆ ಆಲಯವನ್ನು ಕಟ್ಟಿಸಬೇಡ.</verse>
				<verse number="5">ಏಕೆಂದರೆ ನಾನು ಈಜಿಪ್ಟಿನಿಂದ ಇಸ್ರಾಯೇಲರನ್ನು ಬರಮಾಡಿದ ದಿವಸ ಮೊದಲುಗೊಂಡು, ಇಂದಿನವರೆಗೂ ಆಲಯದಲ್ಲಿ ವಾಸಮಾಡದೆ ಒಂದು ಗುಡಾರದ ಸ್ಥಳದಿಂದ ಇನ್ನೊಂದು ಗುಡಾರದ ಸ್ಥಳಕ್ಕೂ, ಒಂದು ತಂಗುವ ಸ್ಥಳದಿಂದ ಇನ್ನೊಂದು ತಂಗುವ ಸ್ಥಳಕ್ಕೂ ಹೋಗುತ್ತಿದ್ದೆನು.</verse>
				<verse number="6">ನಾನು ನನ್ನ ಜನರಾದ ಇಸ್ರಾಯೇಲರನ್ನು ಪರಿಪಾಲಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಜೊತೆಯಾದರೂ, “ನೀವು ನನಗೆ ದೇವದಾರು ಮನೆಯನ್ನು ಏಕೆ ಕಟ್ಟಲಿಲ್ಲ,” ಎಂದು ನಾನು ಸಮಸ್ತ ಇಸ್ರಾಯೇಲಿನ ಸಂಗಡ ಸಂಚರಿಸಿದ ಯಾವ ಸ್ಥಳದಲ್ಲಾದರೂ, ಯಾವಾಗಲಾದರೂ ಕೇಳಿದೆನೋ?’</verse>
				<verse number="7">“ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, ‘ಸೇನಾಧೀಶ್ವರ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ: ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡು, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿರುವಂತೆ ನೇಮಿಸಿದೆನು.</verse>
				<verse number="8">ನೀನು ಎಲ್ಲಿ ಹೋದರೂ ಅಲ್ಲಿ ನಿನ್ನ ಸಂಗಡ ಇದ್ದು, ನಿನ್ನ ಶತ್ರುಗಳನ್ನೆಲ್ಲಾ ನಿನ್ನ ಮುಂದೆಯೇ ಸಂಹರಿಸಿದೆನು. ಭೂಮಿಯಲ್ಲಿರುವ ಮಹಾಪುರುಷರ ಹೆಸರಿನ ಹಾಗೆ ನಿನ್ನ ಹೆಸರನ್ನೂ ಪ್ರಸಿದ್ಧಪಡಿಸುವೆನು.</verse>
				<verse number="9">ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಏರ್ಪಡಿಸಿ, ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಸ್ವಸ್ಥಳದಲ್ಲಿ ವಾಸವಾಗಿರುವ ಹಾಗೆ ಅವರನ್ನು ನೆಲೆಗೊಳಿಸುವೆನು.</verse>
				<verse number="10">ಪೂರ್ವಕಾಲದಲ್ಲಿ ನಾನು ನನ್ನ ಜನರಾದ ಇಸ್ರಾಯೇಲರ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದೆ. ಆ ದಿವಸದಿಂದ ಈಚೆಗೆ, ದುಷ್ಟರು ಇನ್ನು ಮೇಲೆ ಇಸ್ರಾಯೇಲರನ್ನು ಕುಗ್ಗಿಸದೆ ಇರುವರು. ನಾನು ನಿನ್ನ ಸಮಸ್ತ ಶತ್ರುಗಳನ್ನು ತಗ್ಗಿಸಿದ್ದೇನೆ. “ ‘ಯೆಹೋವ ದೇವರಾದ ನಾನು ನಿನಗೆ ಮನೆಯನ್ನು ಕಟ್ಟುವೆನು, ಎಂದು ನಿನಗೆ ತಿಳಿಸುತ್ತೇನೆ.</verse>
				<verse number="11">ನಿನ್ನ ಆಯುಷ್ಕಾಲವು ಮುಗಿದ ಮೇಲೆ, ನೀನು ನಿನ್ನ ಪಿತೃಗಳ ಬಳಿಗೆ ಹೋಗಿ ವಿಶ್ರಮಿಸುವಾಗ, ನಾನು ನಿನ್ನ ಸಂತತಿಯಲ್ಲಿ ಒಬ್ಬನನ್ನು ನಿನ್ನ ಉತ್ತರಾಧಿಕಾರಿಯನ್ನಾಗಿ ನೇಮಿಸಿ, ಅವನ ರಾಜ್ಯವನ್ನು ಸ್ಥಿರಮಾಡುವೆನು.</verse>
				<verse number="12">ಅವನೇ ನನಗೆ ದೇವಾಲಯವನ್ನು ಕಟ್ಟುವನು. ನಾನು ಅವನ ರಾಜಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು.</verse>
				<verse number="13">ನಾನು ಅವನ ತಂದೆಯಾಗಿರುವೆನು. ಅವನು ನನಗೆ ಮಗನಾಗಿರುವನು. ನಿನಗಿಂತ ಮುಂಚೆ ಇದ್ದವನ ಮೇಲಿಂದ ನನ್ನ ಪ್ರೀತಿಯನ್ನು ಹಿಂತೆಗೆದುಕೊಂಡ ಹಾಗೆ ಎಂದಿಗೂ ಅವನಿಂದ ಹಿಂತೆಗೆಯುವುದಿಲ್ಲ.</verse>
				<verse number="14">ಅವನನ್ನು ನನ್ನ ಮನೆಯಲ್ಲಿಯೂ, ನನ್ನ ರಾಜ್ಯದಲ್ಲಿಯೂ ಸದಾಕಾಲಕ್ಕೂ ಸ್ಥಿರಗೊಳಿಸುವೆನು. ಅವನ ಸಿಂಹಾಸನವು ಯುಗಯುಗಾಂತರಕ್ಕೂ ಶಾಶ್ವತವಾಗಿರುವುದು,’ ” ಎಂದು ಹೇಳಿದರು.</verse>
				<verse number="15">ನಾತಾನನು ಈ ಸಮಸ್ತ ಪ್ರಕಟಣೆಯ ಮಾತುಗಳನ್ನು ದಾವೀದನಿಗೆ ತಿಳಿಸಿದನು.</verse>
				<verse number="16">ಅನಂತರ ಅರಸನಾದ ದಾವೀದನು ಒಳಗೆ ಪ್ರವೇಶಿಸಿ, ಯೆಹೋವ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, “ದೇವರೇ, ಯೆಹೋವ ದೇವರೇ, ನನ್ನಂಥವನಿಗೆ ನೀವು ಈ ಪದವಿಯನ್ನು ಅನುಗ್ರಹಿಸಿ, ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು? ನನ್ನ ಕುಟುಂಬ ಎಷ್ಟರದು?</verse>
				<verse number="17">ಯೆಹೋವ ದೇವರೇ, ಇದು ನಿಮ್ಮ ದೃಷ್ಟಿಯಲ್ಲಿ ಅಲ್ಪವೆಂದು ಕಾಣಿಸಿದರೂ ನೀವು ನಿಮ್ಮ ಸೇವಕನ ಸಂತಾನದ ಭವಿಷ್ಯದ ಕುರಿತೂ ವಾಗ್ದಾನಮಾಡಿರುವಿರಿ. ಯೆಹೋವ ದೇವರೇ, ನೀವು ನನ್ನನ್ನು ಮನುಷ್ಯರಲ್ಲಿ ಅತ್ಯುನ್ನತ ವ್ಯಕ್ತಿಯಂತೆ ನೋಡಿರುವಿರಿ.</verse>
				<verse number="18">“ನಿಮ್ಮ ಸೇವಕನ ಘನತೆಯ ನಿಮಿತ್ತ, ದಾವೀದನು ಇನ್ನೂ ಹೆಚ್ಚಾಗಿ ಹೇಳಿಕೊಳ್ಳುವುದೇನಿದೆ? ಏಕೆಂದರೆ ನೀವು ನಿಮ್ಮ ಸೇವಕನನ್ನು ಚೆನ್ನಾಗಿ ಬಲ್ಲಿರಿ.</verse>
				<verse number="19">ಯೆಹೋವ ದೇವರೇ, ನಿಮ್ಮ ಸೇವಕನ ನಿಮಿತ್ತವಾಗಿಯೂ, ನಿಮ್ಮ ಚಿತ್ತಾನುಸಾರವಾಗಿಯೂ ಈ ಮಹಾಕಾರ್ಯಗಳನ್ನೆಲ್ಲಾ ನಡೆಸಿ, ಎಲ್ಲ ವಾಗ್ದಾನಗಳನ್ನು ತಿಳಿಯಪಡಿಸಿರುವಿರಿ.</verse>
				<verse number="20">“ಯೆಹೋವ ದೇವರೇ, ನಮ್ಮ ಕಿವಿಗಳಿಂದ ನಾವು ಕೇಳಿದವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ನಿಮ್ಮ ಹಾಗೆ ಯಾರೂ ಇಲ್ಲ; ನಿಮ್ಮ ಹೊರತು ದೇವರು ಯಾರೂ ಇಲ್ಲ.</verse>
				<verse number="21">ಭೂಲೋಕದಲ್ಲಿ ನಿಮ್ಮ ಜನರಾದ ಇಸ್ರಾಯೇಲರಿಗೆ ಸಮಾನವಾದ ಜನಾಂಗ ಯಾವುದು? ದೇವರಾದ ನೀವೇ ಹೋಗಿ ಅವರನ್ನು ಸ್ವಜನರಾಗಿ ವಿಮೋಚಿಸಿ ನಿಮ್ಮ ಹೆಸರನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟಿನಿಂದ ವಿಮೋಚಿಸಿ ತಂದ ನಿಮ್ಮ ಪ್ರಜೆಗಳ ಎದುರಿನಿಂದ ಜನಾಂಗಗಳನ್ನು ಓಡಿಸುವ ಮೂಲಕ ವಿಸ್ಮಯಕರವಾದ ಮಹಾ ಅದ್ಭುತಗಳನ್ನು ಮಾಡಿದ್ದೀರಲ್ಲವೇ?</verse>
				<verse number="22">ನೀವು ಇಸ್ರಾಯೇಲ್ ಜನರನ್ನು ಶಾಶ್ವತವಾಗಿ ನಿಮ್ಮ ಸ್ವಂತ ಜನರಾಗಿ ಮಾಡಿದಿರಿ; ಯೆಹೋವ ದೇವರೇ, ನೀವೇ ಅವರಿಗೆ ದೇವರಾದಿರಿ.</verse>
				<verse number="23">“ಈಗ ಯೆಹೋವ ದೇವರೇ, ನೀವು ನಿಮ್ಮ ಸೇವಕನನ್ನು ಕುರಿತೂ, ಅವನ ಕುಟುಂಬವನ್ನು ಕುರಿತೂ ಮಾಡಿದ ವಾಗ್ದಾನವನ್ನು ನೆರವೇರಿಸಿ ಅದನ್ನು ಶಾಶ್ವತವಾಗಿ ಸ್ಥಿರಪಡಿಸಿರಿ.</verse>
				<verse number="24">‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಇಸ್ರಾಯೇಲ್ ದೇವರಾಗಿದ್ದಾರೆಂದು ನಿಮ್ಮ ನಾಮವು ಶಾಶ್ವತವಾಗಿ ಘನಪಡಲಿ,’ ಎಂದು ಜನರು ಹೇಳಲಿ. ನಿಮ್ಮ ಸೇವಕನಾದ ದಾವೀದನ ಮನೆಯು ನಿಮ್ಮ ಮುಂದೆ ಸ್ಥಿರವಾಗಿರಲಿ.</verse>
				<verse number="25">“ಏಕೆಂದರೆ ನನ್ನ ದೇವರೇ, ನೀವು ನಿಮ್ಮ ಸೇವಕನಿಗೆ ಮನೆಯನ್ನು ಕಟ್ಟುವೆನೆಂದು ಪ್ರಕಟ ಮಾಡಿದ್ದರಿಂದ ನಿಮ್ಮನ್ನು ಪ್ರಾರ್ಥಿಸುವುದಕ್ಕೆ ನಿಮ್ಮ ಸೇವಕನ ಹೃದಯದಲ್ಲಿ ಧೈರ್ಯ ಉಂಟಾಯಿತು.</verse>
				<verse number="26">ಯೆಹೋವ ದೇವರೇ, ನಿಮ್ಮ ಸೇವಕನಿಗೆ ಈ ಒಳ್ಳೆಯ ಸಂಗತಿಗಳನ್ನು ವಾಗ್ದಾನಮಾಡಿದ ನೀವು ದೇವರಾಗಿದ್ದೀರಿ.</verse>
				<verse number="27">ಈಗ ನಿಮ್ಮ ಸೇವಕನ ಮನೆಯು ನಿಮ್ಮ ಮುಂದೆ ಶಾಶ್ವತವಾಗಿ ಇರುವ ಹಾಗೆ, ಅದನ್ನು ಆಶೀರ್ವದಿಸಲು ಸಂತೋಷಪಡಿರಿ; ಯೆಹೋವ ದೇವರೇ, ನೀವು ಆಶೀರ್ವದಿಸಿದ್ದೀರಿ, ಅದು ನಿತ್ಯ ಆಶೀರ್ವಾದ ಹೊಂದಿರುವುದು.”</verse>
			</chapter>
			<chapter number="18">
				<verse number="1">ಇದರ ತರುವಾಯ ದಾವೀದನು ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿ, ಅವರಿಂದ ಗತ್ ಪಟ್ಟಣವನ್ನೂ ಅದರ ಸುತ್ತಲಿನ ಗ್ರಾಮಗಳನ್ನೂ ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.</verse>
				<verse number="2">ಹಾಗೆಯೇ ಅವನು ಮೋವಾಬ್ಯರನ್ನು ಸಹ ಸೋಲಿಸಿದನು, ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು.</verse>
				<verse number="3">ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿರುವಾಗ, ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದದೆಜೆರನನ್ನು ಸೋಲಿಸಿದನು.</verse>
				<verse number="4">ದಾವೀದನು ಅವನಿಂದ ಸಾವಿರ ರಥಗಳನ್ನೂ, ಏಳು ಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ವಶಪಡಿಸಿಕೊಂಡನು. ನೂರು ರಥಗಳಿಗೆ ಕುದುರೆಗಳನ್ನು ಉಳಿಸಿ, ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ಯಿಸಿಬಿಟ್ಟನು.</verse>
				<verse number="5">ದಮಸ್ಕದ ಅರಾಮ್ಯರು ಚೋಬದ ಅರಸ ಹದದೆಜೆರನಿಗೆ ಸಹಾಯಮಾಡಲು ಬಂದಾಗ, ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸಂಹರಿಸಿಬಿಟ್ಟನು.</verse>
				<verse number="6">ತರುವಾಯ ದಾವೀದನು ದಮಸ್ಕದ ಅರಾಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಹೀಗೆ ಅರಾಮ್ಯರು ದಾವೀದನಿಗೆ ಅಧೀನರಾಗಿ, ಕಪ್ಪವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.</verse>
				<verse number="7">ಆಗ ದಾವೀದನು ಹದದೆಜೆರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು, ಅವುಗಳನ್ನು ಯೆರೂಸಲೇಮಿಗೆ ತಂದನು.</verse>
				<verse number="8">ಇದಲ್ಲದೆ ಹದದೆಜೆರನ ಪಟ್ಟಣಗಳಾದ ಟಿಭತಿನಿಂದಲೂ, ಕೂನ್‌ದಿಂದಲೂ ದಾವೀದನು ಅತ್ಯಧಿಕವಾಗಿ ಕಂಚನ್ನು ತೆಗೆದುಕೊಂಡು ಬಂದನು. ಅದರಿಂದ ಸೊಲೊಮೋನನು ಕಂಚಿನ ಕೊಳವನ್ನೂ, ಸ್ತಂಭಗಳನ್ನೂ, ವಿವಿಧ ಪಾತ್ರೆಗಳನ್ನೂ ಮಾಡಿಸಿದನು.</verse>
				<verse number="9">ದಾವೀದನು ಚೋಬದ ಅರಸನಾದ ಹದದೆಜೆರನ ಸಮಸ್ತ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವನ್ನು ಹಮಾತಿನ ಅರಸನಾದ ತೋವು ಕೇಳಿದಾಗ,</verse>
				<verse number="10">ಅರಸನಾದ ದಾವೀದನ ಕ್ಷೇಮಸಮಾಚಾರವನ್ನು ವಿಚಾರಿಸಲೂ, ಹದದೆಜೆರನ ವಿರುದ್ಧ ಯುದ್ಧಮಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಅವನನ್ನು ಅಭಿನಂದಿಸಿ, ಹರಸುವಂತೆ, ತೋವು ತನ್ನ ಪುತ್ರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ, ಬಂಗಾರ, ಕಂಚಿನ ಪಾತ್ರೆಗಳ ಸಹಿತವಾಗಿ ದಾವೀದನ ಬಳಿಗೆ ಕಳುಹಿಸಿದನು; ಏಕೆಂದರೆ ಹದದೆಜೆರನಿಗೆ ತೋವಿಯ ಸಂಗಡ ಯುದ್ಧಗಳಿದ್ದವು.</verse>
				<verse number="11">ಇವುಗಳನ್ನು ಅರಸನಾದ ದಾವೀದನು ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು, ಫಿಲಿಷ್ಟಿಯರು, ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿಬಂಗಾರವನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದನು.</verse>
				<verse number="12">ಇದಲ್ಲದೆ ಚೆರೂಯಳ ಮಗ ಅಬೀಷೈಯನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಎದೋಮ್ಯರ ಸೈನಿಕರನ್ನು ಕೊಂದನು.</verse>
				<verse number="13">ಎದೋಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಇದರಿಂದ, ಎದೋಮ್ಯರೆಲ್ಲರು ದಾವೀದನಿಗೆ ಅಧೀನರಾದರು. ದಾವೀದನು ಹೋದಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.</verse>
				<verse number="14">ಹೀಗೆಯೇ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ ತನ್ನ ಸಮಸ್ತ ಜನರಿಗೂ ನೀತಿ ನ್ಯಾಯಗಳಿಂದ ನಡೆಸುತ್ತಿದ್ದನು.</verse>
				<verse number="15">ಚೆರೂಯಳ ಮಗ ಯೋವಾಬನು ಸೈನ್ಯದ ಅಧಿಪತಿಯಾಗಿದ್ದನು. ಅಹೀಲೂದನ ಮಗ ಯೆಹೋಷಾಫಾಟನು ಆಸ್ಥಾನದ ಆಗುಹೋಗುಗಳನ್ನು ದಾಖಲಿಸುವವನಾಗಿದ್ದನು.</verse>
				<verse number="16">ಅಹೀಟೂಬನ ಮಗ ಚಾದೋಕನೂ, ಅಬಿಯಾತರನ ಮಗ ಅಹೀಮೆಲೆಕನೂ ಯಾಜಕರಾಗಿದ್ದರು. ಶವ್ಷನು ಕಾರ್ಯದರ್ಶಿಯಾಗಿದ್ದನು.</verse>
				<verse number="17">ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ, ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು. ದಾವೀದನ ಪುತ್ರರು ಅರಸನ ಬಳಿಯಲ್ಲಿ ಪ್ರಧಾನರಾಗಿದ್ದರು.</verse>
			</chapter>
			<chapter number="19">
				<verse number="1">ಇದರ ತರುವಾಯ, ಅಮ್ಮೋನಿಯರ ಅರಸನಾದ ನಾಹಾಷನು ಮರಣಹೊಂದಿದನು; ಅವನಿಗೆ ಬದಲಾಗಿ ಅವನ ಮಗನು ಅರಸನಾದನು.</verse>
				<verse number="2">ಆಗ ದಾವೀದನು, “ಹಾನೂನನ ತಂದೆಯಾದ ನಾಹಾಷನು ನನಗೆ ದಯೆ ತೋರಿಸಿದ್ದರಿಂದ, ನಾನೂ ಅವನ ಮಗ ಹಾನೂನನಿಗೆ ದಯೆ ತೋರಿಸುವೆನು,” ಎಂದನು. ದಾವೀದನು ಅವನ ತಂದೆಯನ್ನು ಕುರಿತು ಹಾನೂನನಿಗೆ ಸಂತಾಪ ಸೂಚಿಸಲು ತನ್ನ ಸೇವಕರನ್ನು ಕಳುಹಿಸಿದನು. ಹೀಗೆಯೇ ದಾವೀದನ ದೂತರು ಹಾನೂನನಿಗೆ ಸಂತಾಪ ಸೂಚಿಸಲು, ಅಮ್ಮೋನಿಯರ ದೇಶಕ್ಕೆ ಬಂದರು.</verse>
				<verse number="3">ಆಗ ಅಮ್ಮೋನಿಯರ ಪ್ರಧಾನರು ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತಾಪ ಸೂಚಿಸುವವರನ್ನು ಕಳುಹಿಸಿದ್ದರಿಂದ, ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ಯೋಚಿಸುತ್ತೀಯೋ? ಅವನ ದೂತರು ಈ ದೇಶವನ್ನು ಸಂಚರಿಸಿ ನೋಡುವುದಕ್ಕೂ ಶೋಧಿಸುವುದಕ್ಕೂ ಅದನ್ನು ಕೆಡವಿ ಹಾಕುವುದಕ್ಕೂ ನಿನ್ನ ಬಳಿಗೆ ಬರಲಿಲ್ಲವೋ?” ಎಂದರು.</verse>
				<verse number="4">ಆದ್ದರಿಂದ ಹಾನೂನನು ದಾವೀದನ ದೂತರನ್ನು ಹಿಡಿದು ಅವರ ಗಡ್ಡ, ತಲೆ ಬೋಳಿಸಿ, ಅವರ ವಸ್ತ್ರಗಳನ್ನು ಬೆನ್ನ ಹಿಂದೆ ಮಧ್ಯದಿಂದ ಸೊಂಟದ ಕೆಳಗಿನವರೆಗೂ ಕತ್ತರಿಸಿ, ಅವರನ್ನು ಕಳುಹಿಸಿಬಿಟ್ಟನು.</verse>
				<verse number="5">ಆಗ ಕೆಲವರು ಹೋಗಿ, ಈ ಮನುಷ್ಯರನ್ನು ಕುರಿತು ದಾವೀದನಿಗೆ ತಿಳಿಸಿದಾಗ, ಬಹಳ ಅಪಮಾನ ಹೊಂದಿದ ಅವರಿಗೆ ದಾವೀದನು ತನ್ನ ಆಳುಗಳನ್ನು ಅವರಿಗೆದುರಾಗಿ ಕಳುಹಿಸಿ, “ನಿಮ್ಮ ಗಡ್ಡಗಳು ಬೆಳೆಯುವವರೆಗೂ ಯೆರಿಕೋವಿನಲ್ಲಿ ಇರಿ. ಆಮೇಲೆ ತಿರುಗಿ ಬನ್ನಿರಿ,” ಎಂದು ಹೇಳಿಸಿದನು.</verse>
				<verse number="6">ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನಿಗೆ ಮತ್ತು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅರಾಮಿನಲ್ಲಿಯೂ, ಅರಾಮ್ ಮಾಕದಲ್ಲಿಯೂ, ಚೋಬದಲ್ಲಿಯೂ ರಥಗಳನ್ನೂ, ರಾಹುತರನ್ನೂ ಕೂಲಿಗೆ ತೆಗೆದುಕೊಳ್ಳಲು ಮೂವತ್ತು ನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕಳುಹಿಸಿದರು.</verse>
				<verse number="7">ಹೀಗೆಯೇ ಅವರು ಮೂವತ್ತೆರಡು ಸಾವಿರ ರಥಗಳನ್ನೂ, ಮಾಕದ ಅರಸನನ್ನೂ, ಅವನ ಜನರನ್ನೂ ಕೂಲಿಗೆ ತೆಗೆದುಕೊಂಡರು. ಇವರು ಬಂದು ಮೇದೆಬ ಊರಿನ ಬಳಿಯಲ್ಲಿ ದಂಡಿಳಿದರು. ಇದಲ್ಲದೆ ಅಮ್ಮೋನಿಯರು ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು.</verse>
				<verse number="8">ದಾವೀದನು ಇದನ್ನು ಕೇಳಿದಾಗ, ಅವನು ಯೋವಾಬನನ್ನೂ, ಪರಾಕ್ರಮಶಾಲಿಗಳಾದ ಸಮಸ್ತ ಸೈನಿಕರನ್ನೂ ಕಳುಹಿಸಿದನು.</verse>
				<verse number="9">ಆಗ ಅಮ್ಮೋನಿಯರು ಹೊರಟು, ಪಟ್ಟಣದ ದ್ವಾರದ ಹತ್ತಿರ ವ್ಯೂಹ ಕಟ್ಟಿದರು. ಆದರೆ ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಬೈಲಿನಲ್ಲಿ ಇಳಿದುಕೊಂಡಿದ್ದರು.</verse>
				<verse number="10">ಯೋವಾಬನು, ಯುದ್ಧವು ತನ್ನ ವಿರೋಧವಾಗಿ ಹಿಂದೆಯೂ, ಮುಂದೆಯೂ ಇರುವುದನ್ನು ಕಂಡಾಗ, ಅವನು ಇಸ್ರಾಯೇಲಿನ ಎಲ್ಲಾ ಶ್ರೇಷ್ಠ ಸೈನಿಕರನ್ನು ಆಯ್ದುಕೊಂಡು, ಅರಾಮ್ಯರಿಗೆ ಎದುರಾಗಿ ನಿಲ್ಲಿಸಿದನು.</verse>
				<verse number="11">ಆದರೆ ಉಳಿದ ಜನರನ್ನು ಅಮ್ಮೋನಿಯರಿಗೆದುರಾಗಿ ವ್ಯೂಹ ಕಟ್ಟುವ ಹಾಗೆ, ಅವರನ್ನು ತನ್ನ ತಮ್ಮನಾದ ಅಬೀಷೈಯನ ಕೈಯಲ್ಲಿ ಒಪ್ಪಿಸಿಕೊಟ್ಟು,</verse>
				<verse number="12">ಅವನಿಗೆ ಯೋವಾಬನು, “ಅರಾಮ್ಯರು ನನಗಿಂತ ಬಲವುಳ್ಳವರಾದರೆ, ನೀನು ನನಗೆ ಸಹಾಯಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳವರಾದರೆ, ನಾನು ಬಂದು ನಿನಗೆ ಸಹಾಯ ಮಾಡುವೆನು.</verse>
				<verse number="13">ದೃಢವಾಗಿರು; ನಾವು ನಮ್ಮ ಜನರಿಗೋಸ್ಕರವೂ, ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಧೈರ್ಯವಾಗಿ ಹೋರಾಡೋಣ. ಯೆಹೋವ ದೇವರು ತಮ್ಮ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ,” ಎಂದನು.</verse>
				<verse number="14">ಆಗ ಯೋವಾಬನೂ, ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ದಾಳಿಮಾಡಲು ಹತ್ತಿರವಾದಾಗ, ಅರಾಮ್ಯರು ಓಡಿಹೋದರು.</verse>
				<verse number="15">ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನಿಯರು ಕಂಡಾಗ, ಅವರೂ ಸಹ ಯೋವಾಬನ ತಮ್ಮನಾದ ಅಬೀಷೈಯನ ಎದುರಿನಿಂದ ಓಡಿಹೋಗಿ, ಪಟ್ಟಣದೊಳಗೆ ಅಡಗಿಕೊಂಡರು. ಆಗ ಯೋವಾಬನು ಯೆರೂಸಲೇಮಿಗೆ ತಿರುಗಿಹೋದನು.</verse>
				<verse number="16">ಅರಾಮ್ಯರಿಗೆ ತಾವು ಇಸ್ರಾಯೇಲರಿಂದ ಸೋತುಹೋದೆವೆಂದು ತಿಳಿದಾಗ, ಅವರು ದೂತರನ್ನು ಕಳುಹಿಸಿ, ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಇತರ ಅರಾಮ್ಯರನ್ನು ಕರೆಯಿಸಿಕೊಂಡರು. ಹದದೆಜೆರನ ಸೇನಾಧಿಪತಿಯಾದ ಶೋಫಕನು ಅವರ ನಾಯಕನಾದನು.</verse>
				<verse number="17">ಅದನ್ನು ದಾವೀದನಿಗೆ ತಿಳಿಸಿದಾಗ, ಅವನು ಸಮಸ್ತ ಇಸ್ರಾಯೇಲರನ್ನು ಕೂಡಿಸಿಕೊಂಡು, ಯೊರ್ದನನ್ನು ದಾಟಿ, ಅವರಿಗೆದುರಾಗಿ ವ್ಯೂಹ ಕಟ್ಟಿದನು. ದಾವೀದನು ಅರಾಮ್ಯರಿಗೆದುರಾಗಿ ಸೈನ್ಯವನ್ನು ವ್ಯೂಹ ಕಟ್ಟಿದ ಮೇಲೆ, ಅವರು ಅವನ ವಿರುದ್ಧ ಯುದ್ಧಮಾಡಿದರು.</verse>
				<verse number="18">ಆದರೆ ಅರಾಮ್ಯರು ಇಸ್ರಾಯೇಲರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ಸಾವಿರ ರಥಗಳನ್ನೂ ಹಾಳು ಮಾಡಿ, ನಲವತ್ತು ಸಾವಿರ ಕಾಲಾಳುಗಳನ್ನೂ, ಅವರ ಸೇನಾಧಿಪತಿಯಾದ ಶೋಫಕನನ್ನೂ ಕೊಂದುಹಾಕಿದನು.</verse>
				<verse number="19">ಹದದೆಜೆರನ ಅಧೀನ ರಾಜರು ತಾವು ಇಸ್ರಾಯೇಲರ ಮುಂದೆ ಸೋತುಹೋದದ್ದನ್ನು ಕಂಡಾಗ, ಅವರು ದಾವೀದನ ಸಂಗಡ ಸಂಧಾನ ಮಾಡಿಕೊಂಡು, ಅವನಿಗೆ ಅಧೀನರಾದರು. ತರುವಾಯ ಅರಾಮ್ಯರು ಅಮ್ಮೋನಿಯರಿಗೆ ಮತ್ತೆ ಸಹಾಯ ಮಾಡುವುದಕ್ಕೆ ಮನಸ್ಸಿಲ್ಲದವರಾದರು.</verse>
			</chapter>
			<chapter number="20">
				<verse number="1">ಮರು ವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ, ಯೋವಾಬನು ಬಲವಾದ ಸೈನ್ಯವನ್ನು ಕರೆದುಕೊಂಡು ಹೋಗಿ, ಅಮ್ಮೋನಿಯರ ಪ್ರಾಂತಗಳನ್ನು ಹಾಳು ಮಾಡಿ, ರಬ್ಬ ನಗರಕ್ಕೆ ಮುತ್ತಿಗೆಹಾಕಿದನು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣದ ಮೇಲೆ ದಾಳಿಮಾಡಿ, ಅದನ್ನು ನಾಶಮಾಡಿದನು.</verse>
				<verse number="2">ಇದಲ್ಲದೆ ದಾವೀದನು ರಬ್ಬಾ ನಗರಕ್ಕೆ ಬಂದಾಗ, ಮಲ್ಕಾಮ್ ಮೂರ್ತಿಯ ತಲೆಯ ಮೇಲೆ ಇದ್ದ ಕಿರೀಟವನ್ನು ಸಹ ತೆಗೆದುಕೊಂಡನು. ಅದು ಮೂವತ್ತೈದು ಕಿಲೋಗ್ರಾಂ ತೂಕದ್ದಾಗಿತ್ತು. ಅದನ್ನು ಬಂಗಾರದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ ಅಲಂಕರಿಸಲಾಗಿತ್ತು, ಆ ಕಿರೀಟವನ್ನು ದಾವೀದನ ಶಿರಸ್ಸಿನಲ್ಲಿ ಧರಿಸಲಾಯಿತು. ಆ ಪಟ್ಟಣದೊಳಗಿಂದ ಅತ್ಯಧಿಕವಾದ ಕೊಳ್ಳೆಯನ್ನೂ ತೆಗೆದುಕೊಂಡು ಬಂದನು.</verse>
				<verse number="3">ಇದಲ್ಲದೆ ಅವನು ಅದರಲ್ಲಿದ್ದ ಜನರನ್ನು ಹೊರಗೆ ತಂದು, ಅವರನ್ನು ಗರಗಸ ಗುದ್ದಲಿ ಕೊಡಲಿಗಳಿಂದ ಕೆಲಸ ಮಾಡುವದಕ್ಕೂ ಇಟ್ಟನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟಣಗಳಿಗೂ ಮಾಡಿದನು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ತಿರುಗಿಬಂದನು.</verse>
				<verse number="4">ಇದರ ತರುವಾಯ, ಫಿಲಿಷ್ಟಿಯರ ಸಂಗಡ ಗೆಜೆರಿನಲ್ಲಿ ಯುದ್ಧನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಿಪ್ಪೈ ಎಂಬವನನ್ನು ಕೊಂದದ್ದರಿಂದ ಫಿಲಿಷ್ಟಿಯರು ಸೋತುಹೋದರು.</verse>
				<verse number="5">ಅನಂತರ ಫಿಲಿಷ್ಟಿಯರ ಸಂಗಡ ಯುದ್ಧ ಉಂಟಾದಾಗ, ಯಾಯೀರನ ಮಗನಾದ ಎಲ್ಹನಾನನು ಗಿತ್ತೀಯನಾದ ಗೊಲ್ಯಾತನ ಸಹೋದರನಾದ ಲಹ್ಮೀಯನ್ನು ಕೊಂದನು. ಈ ಗೊಲ್ಯಾತನ ಈಟಿಯ ಹಿಡಿಕೆಯು ನೇಯುವವರ ಕುಂಟೆ ಕಟ್ಟಿಗೆಗೆ ಸಮನಾಗಿತ್ತು.</verse>
				<verse number="6">ಇನ್ನೊಂದು ಸಾರಿ ಗತ್ ಊರಿನಲ್ಲಿ ಯುದ್ಧ ಉಂಟಾದಾಗ, ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು. ಅವನ ಕೈಕಾಲುಗಳ ಬೆರಳುಗಳು ಆರಾರರಂತೆ, ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನು ಸಹ ರೆಫಾಯನಿಗೆ ಹುಟ್ಟಿದವನಾಗಿದ್ದನು.</verse>
				<verse number="7">ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾದ ಶಿಮ್ಮನ ಮಗನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.</verse>
				<verse number="8">ಇವರು ಗತ್ ಊರಿನಲ್ಲಿದ್ದ ರೆಫಾಯರ ವಂಶಜರು. ಇವರು ದಾವೀದನಿಂದಲೂ ಅವನ ಜನರಿಂದಲೂ ಸಂಹಾರವಾಗಿ ಹೋದರು.</verse>
			</chapter>
			<chapter number="21">
				<verse number="1">ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.</verse>
				<verse number="2">ಆದ್ದರಿಂದ ದಾವೀದನು ಯೋವಾಬನನ್ನೂ ಜನರ ಪ್ರಧಾನರನ್ನೂ ಕರೆದು ಅವರಿಗೆ, “ನಾನು ಜನರ ಲೆಕ್ಕವನ್ನು ತಿಳಿಯುವ ಹಾಗೆ, ನೀವು ಹೋಗಿ ಬೇರ್ಷೆಬವು ಮೊದಲುಗೊಂಡು, ದಾನ್ ಊರಿನವರೆಗೆ ಇಸ್ರಾಯೇಲರನ್ನು ಲೆಕ್ಕಿಸಿ, ಅವರ ಲೆಕ್ಕವನ್ನು ನನಗೆ ತೆಗೆದುಕೊಂಡು ಬನ್ನಿರಿ,” ಎಂದನು.</verse>
				<verse number="3">ಆಗ ಯೋವಾಬನು, “ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ. ಆದರೆ ನನ್ನ ಒಡೆಯನಾದ ಅರಸನೇ, ಅವರೆಲ್ಲರೂ ನನ್ನ ಒಡೆಯನ ಸೇವಕರಲ್ಲವೋ, ನನ್ನ ಒಡೆಯನು ಈ ಕಾರ್ಯವನ್ನು ಅಪೇಕ್ಷಿಸುವುದು ಏಕೆ? ಇದು ಇಸ್ರಾಯೇಲಿನಲ್ಲಿ ಅಪರಾಧಕ್ಕೆ ಕಾರಣವಾಗುವುದು,” ಎಂದನು.</verse>
				<verse number="4">ಆದರೆ ಅರಸನ ಮಾತೇ ಯೋವಾಬನಿಗೆ ವಿರೋಧವಾಗಿ ಗೆದ್ದಿತು. ಆಗ ಅವನು ಹೊರಟು, ಇಸ್ರಾಯೇಲಿನ ಸಮಸ್ತ ಪ್ರಾಂತಗಳಿಗೆ ಹೋಗಿ, ಯೆರೂಸಲೇಮಿಗೆ ತಿರುಗಿಬಂದನು.</verse>
				<verse number="5">ಯೋವಾಬನು ದಾವೀದನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನೆಂದರೆ: ಸಮಸ್ತ ಇಸ್ರಾಯೇಲರಲ್ಲಿ ಖಡ್ಗ ಹಿಡಿಯತಕ್ಕ ಪರಾಕ್ರಮವುಳ್ಳ ಹನ್ನೊಂದು ಲಕ್ಷಮಂದಿ ಇದ್ದರು. ಯೆಹೂದದ ಜನರು ನಾಲ್ಕು ಲಕ್ಷದ ಎಪ್ಪತ್ತು ಸಾವಿರ ಮಂದಿ ಇದ್ದರು.</verse>
				<verse number="6">ಆದರೆ ಲೇವಿಯರನ್ನೂ, ಬೆನ್ಯಾಮೀನರನ್ನೂ ಅವರಲ್ಲಿ ಎಣಿಸಲಿಲ್ಲ. ಏಕೆಂದರೆ ಅರಸನ ಮಾತು ಯೋವಾಬನಿಗೆ ಅಸಹ್ಯಕರವಾಗಿತ್ತು.</verse>
				<verse number="7">ಇದಲ್ಲದೆ ಈ ಕಾರ್ಯವು ದೇವರ ಸಮ್ಮುಖದಲ್ಲಿ ಕೆಟ್ಟದ್ದಾದದ್ದರಿಂದ, ದೇವರು ಇಸ್ರಾಯೇಲನ್ನು ಶಿಕ್ಷಿಸಿದರು.</verse>
				<verse number="8">ದಾವೀದನು ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ, ಮಹಾಪಾಪ ಮಾಡಿದೆನು. ನೀವು ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ. ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು.</verse>
				<verse number="9">ಆಗ ಯೆಹೋವ ದೇವರು ದಾವೀದನ ದರ್ಶಿಯಾದ ಗಾದನಿಗೆ,</verse>
				<verse number="10">“ನೀನು ದಾವೀದನ ಬಳಿಗೆ ಹೋಗಿ, ಅವನ ಸಂಗಡ ಮಾತಾಡಿ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನಗೆ ವಿರೋಧವಾಗಿ ಬರಮಾಡಬೇಕೋ ಅದನ್ನು ಆಯ್ದುಕೋ,’ ಎಂದು ಹೇಳು,” ಎಂದರು.</verse>
				<verse number="11">ಹಾಗೆಯೇ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನೇ ಆಯ್ದುಕೋ,</verse>
				<verse number="12">ನಿನ್ನ ದೇಶದಲ್ಲಿ ಮೂರು ವರುಷ ಕ್ಷಾಮ ಉಂಟಾಗಬೇಕೋ? ಇಲ್ಲವೆ ಮೂರು ತಿಂಗಳವರೆಗೆ ನಿನ್ನ ಶತ್ರುಗಳ ಹಿಂಸೆಗೆ ಬಲಿಯಾಗುವುದು ಬೇಕೋ? ಇಲ್ಲವೆ ಯೆಹೋವ ದೇವರ ದೂತನು ಇಸ್ರಾಯೇಲಿನ ಸಮಸ್ತ ಪ್ರಾಂತಗಳಲ್ಲಿ ಯೆಹೋವ ದೇವರ ಖಡ್ಗದಿಂದ ಮೂರು ದಿವಸಗಳವರೆಗೆ ಘೋರವ್ಯಾಧಿ ಉಂಟಾಗಬೇಕೋ? ನೀನು ಆರಿಸಿಕೋ. ಈಗ ನನ್ನನ್ನು ಕಳುಹಿಸಿದವರಿಗೆ ನಾನು ಏನು ಉತ್ತರ ತೆಗೆದುಕೊಂಡು ಹೋಗಬೇಕು? ಯೋಚಿಸಿನೋಡು,” ಎಂದನು.</verse>
				<verse number="13">ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಯೆಹೋವ ದೇವರ ಕೈಯಲ್ಲಿಯೇ ಬೀಳುತ್ತೇನೆ. ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು.</verse>
				<verse number="14">ಆದಕಾರಣ ಯೆಹೋವ ದೇವರು ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ಇಸ್ರಾಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.</verse>
				<verse number="15">ಇದಲ್ಲದೆ ಯೆರೂಸಲೇಮನ್ನು ನಾಶಮಾಡುವುದಕ್ಕೆ ದೇವರು ದೂತನನ್ನು ಕಳುಹಿಸಿದರು. ಅವನು ನಾಶಮಾಡುವುದನ್ನು ಯೆಹೋವ ದೇವರು ನೋಡಿ, ಆ ದಂಡನೆಗೋಸ್ಕರ ದುಃಖಪಟ್ಟು, ಜನರನ್ನು ನಾಶಮಾಡುವ ದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು.</verse>
				<verse number="16">ಆಗ ದಾವೀದನು ತನ್ನ ಕಣ್ಣೆತ್ತಿ ಭೂಮಿಗೂ, ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಯೆಹೋವ ದೇವರ ದೂತನನ್ನು ಕಂಡನು. ಅವನ ಕೈಯಲ್ಲಿ ಯೆರೂಸಲೇಮಿನ ಮೇಲೆ ಚಾಚಿದ್ದ ಹಿರಿದ ಖಡ್ಗ ಇತ್ತು. ಆಗ ದಾವೀದನೂ, ಇಸ್ರಾಯೇಲಿನ ಹಿರಿಯರೂ ಗೋಣಿತಟ್ಟುಗಳನ್ನು ಹೊದ್ದುಕೊಂಡು ಬೋರಲಾಗಿ ಬಿದ್ದರು.</verse>
				<verse number="17">ದಾವೀದನು ದೇವರಿಗೆ, “ಜನರಲ್ಲಿ ಯುದ್ಧ ವೀರರನ್ನು ಲೆಕ್ಕಮಾಡಲು ಆಜ್ಞಾಪಿಸಿದವನು ನಾನಲ್ಲವೋ? ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಈ ಕೆಟ್ಟದ್ದನ್ನು ಮಾಡಿದೆನು, ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನನ್ನ ಯೆಹೋವ ದೇವರೇ, ನಿಮ್ಮ ಹಸ್ತವು ನಿಮ್ಮ ಜನರನ್ನು ಬಾಧಿಸದೆ, ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.</verse>
				<verse number="18">ಆಗ ಯೆಹೋವ ದೇವರ ದೂತನು ಗಾದನಿಗೆ, “ದಾವೀದನು ಹೋಗಿ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟುವ ಹಾಗೆ ದಾವೀದನಿಗೆ ಹೇಳು,” ಎಂದನು.</verse>
				<verse number="19">ಗಾದನು ಯೆಹೋವ ದೇವರ ಹೆಸರಿನಲ್ಲಿ ಹೇಳಿದ ಮಾತಿನ ಪ್ರಕಾರ ದಾವೀದನು ಹೋದನು.</verse>
				<verse number="20">ಒರ್ನಾನನು ಗೋಧಿಯನ್ನು ತುಳಿಸುತ್ತಿರುವಾಗ, ಹಿಂದಕ್ಕೆ ತಿರುಗಿ ದೂತನನ್ನು ಕಂಡದ್ದರಿಂದ ಅವನೂ, ಅವನ ಸಂಗಡ ಇದ್ದ ಅವನ ನಾಲ್ಕು ಮಂದಿ ಪುತ್ರರೂ ಅಡಗಿಕೊಂಡಿದ್ದರು.</verse>
				<verse number="21">ಆದರೆ ದಾವೀದನು ತನ್ನ ಬಳಿಗೆ ಬರುವುದನ್ನು ಒರ್ನಾನನು ಕಂಡನು, ಆಗ ಅವನು ಕಣದಿಂದ ಹೊರಟು, ದಾವೀದನ ಮುಂದೆ ಮುಖ ಕೆಳಗೆಮಾಡಿ ಅಡ್ಡಬಿದ್ದನು.</verse>
				<verse number="22">ಆಗ ದಾವೀದನು ಒರ್ನಾನನಿಗೆ, “ಈ ವ್ಯಾಧಿಯು, ಜನರನ್ನು ಬಿಟ್ಟುಹೋಗುವಂತೆ ನಾನು ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ, ಈ ಕಣದ ಸ್ಥಳವನ್ನು ನನಗೆ ಕೊಡು. ಅದನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು,” ಎಂದನು.</verse>
				<verse number="23">ಒರ್ನಾನನು ದಾವೀದನಿಗೆ, “ನಿನಗಾಗಿ ತೆಗೆದುಕೋ, ಅರಸನಾದ ನನ್ನ ಒಡೆಯನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ. ದಹನಬಲಿಗೋಸ್ಕರ ಎತ್ತುಗಳೂ, ಸೌದೆಗೆ ಹಂತೀಕುಂಟೆ, ಧಾನ್ಯ ಸಮರ್ಪಣೆಗೋಸ್ಕರ ಗೋಧಿ ಕೊಡುವುದಲ್ಲದೆ, ಸಮಸ್ತವನ್ನೂ ಕೊಡುವೆನು,” ಎಂದನು.</verse>
				<verse number="24">ಅರಸ ದಾವೀದನು ಒರ್ನಾನನಿಗೆ, “ಹಾಗಲ್ಲ, ನಾನು ನಿನ್ನಿಂದ ಪೂರ್ಣ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು, ಯೆಹೋವ ದೇವರಿಗೆ ದಹನಬಲಿಯಾಗಿ ಅರ್ಪಿಸಲು ನನಗೆ ಇಷ್ಟವಿಲ್ಲ,” ಎಂದು ಹೇಳಿದನು.</verse>
				<verse number="25">ಅಂತೆಯೇ ಆ ಭೂಮಿಗಾಗಿ ಒರ್ನಾನನಿಗೆ ಏಳು ಕಿಲೋಗ್ರಾಂ ಬಂಗಾರವನ್ನು ಕೊಟ್ಟು,</verse>
				<verse number="26">ದಾವೀದನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿ ಯೆಹೋವ ದೇವರನ್ನು ಪ್ರಾರ್ಥಿಸಿದನು. ಆಗ ಅವರು ಆಕಾಶದಿಂದ ದಹನಬಲಿಪೀಠದ ಮೇಲೆ ಅಗ್ನಿಯಿಂದ ಅವನಿಗೆ ಉತ್ತರಕೊಟ್ಟರು.</verse>
				<verse number="27">ಯೆಹೋವ ದೇವರು ದೂತನಿಗೆ ಹೇಳಿದ್ದರಿಂದ, ಅವನು ತನ್ನ ಖಡ್ಗವನ್ನು ಒರೆಗೆ ತಿರುಗಿ ಸೇರಿಸಿದನು.</verse>
				<verse number="28">ಯೆಹೋವ ದೇವರು ಯೆಬೂಸಿಯನಾದ ಒರ್ನಾನನ ಕಣದಲ್ಲಿ ತನಗೆ ಉತ್ತರ ಕೊಟ್ಟರೆಂದು ದಾವೀದನು ಕಂಡಾಗ, ಅವನು ಅಲ್ಲಿ ಬಲಿಗಳನ್ನು ಅರ್ಪಿಸಿದನು.</verse>
				<verse number="29">ಮರುಭೂಮಿಯಲ್ಲಿ ಮೋಶೆಯು ಮಾಡಿದ ಯೆಹೋವ ದೇವರ ಗುಡಾರವೂ, ದಹನಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಉನ್ನತ ಸ್ಥಳದಲ್ಲಿ ಇದ್ದವು.</verse>
				<verse number="30">ದಾವೀದನು ದೇವರ ಹತ್ತಿರ ವಿಚಾರಿಸಲು, ಅದರ ಬಳಿಗೆ ಹೋಗಲಾರದೆ ಇದ್ದನು. ಏಕೆಂದರೆ ಅವನು ಯೆಹೋವ ದೇವರ ದೂತನ ಖಡ್ಗದ ನಿಮಿತ್ತ ಹೆದರಿದ್ದನು.</verse>
			</chapter>
			<chapter number="22">
				<verse number="1">ಆಗ ದಾವೀದನು, “ಇದೇ ದೇವರಾದ ಯೆಹೋವ ದೇವರ ಆಲಯ, ಮತ್ತು ಇದೇ ಇಸ್ರಾಯೇಲರ ದಹನಬಲಿಪೀಠ,” ಎಂದನು.</verse>
				<verse number="2">ದಾವೀದನು ಇಸ್ರಾಯೇಲ್ ದೇಶದಲ್ಲಿರುವ ಪರದೇಶಸ್ಥರನ್ನು ಕೂಡಿಸಲು ಹೇಳಿ, ದೇವರ ಆಲಯವನ್ನು ಕಟ್ಟಿಸುವುದಕ್ಕೆ ಕೆತ್ತಿದ ಕಲ್ಲುಗಳನ್ನು ಕಡಿಯುವ ಹಾಗೆ ಕಲ್ಲುಕುಟಿಗರನ್ನು ನೇಮಿಸಿದನು.</verse>
				<verse number="3">ದಾವೀದನು ಬಾಗಿಲುಗಳ ಕದಗಳನ್ನು ಜೋಡಿಸುವುದಕ್ಕೆ ಬೇಕಾದ ಮೊಳೆಗಳಿಗೋಸ್ಕರ ಬಹಳ ಕಬ್ಬಿಣವನ್ನೂ, ಲೆಕ್ಕವಿಲ್ಲದಷ್ಟು ಕಂಚನ್ನೂ ಸಿದ್ಧಮಾಡಿಸಿದನು.</verse>
				<verse number="4">ಲೆಕ್ಕವಿಲ್ಲದಷ್ಟು ದೇವದಾರು ಮರಗಳನ್ನು ಸಿದ್ಧಮಾಡಿಸಿದನು. ಏಕೆಂದರೆ ಸೀದೋನ್ಯರೂ, ಟೈರಿನವರೂ ದಾವೀದನಿಗೆ ಹೆಚ್ಚಾಗಿ ದೇವದಾರು ಮರಗಳನ್ನು ತಂದರು.</verse>
				<verse number="5">ದಾವೀದನು, “ನನ್ನ ಮಗ ಸೊಲೊಮೋನನು ಎಳೆಯ ಪ್ರಾಯದವನಾಗಿದ್ದಾನೆ. ಯೆಹೋವ ದೇವರಿಗೆ ಕಟ್ಟಬೇಕಾದ ಆಲಯವು ಸಮಸ್ತ ದೇಶಗಳಲ್ಲಿ ಕೀರ್ತಿಯಲ್ಲಿಯೂ, ಸೌಂದರ್ಯದಲ್ಲಿಯೂ ಅಧಿಕ ಘನವುಳ್ಳದ್ದಾಗಿರಬೇಕು. ನಾನು ಅದಕ್ಕೋಸ್ಕರ ಈಗ ಸಿದ್ಧಮಾಡುವೆನು,” ಎಂದು ಹೇಳಿದನು. ಆದ್ದರಿಂದ ದಾವೀದನು ಸಾಯುವುದಕ್ಕಿಂತ ಮುಂಚೆ ಬಹಳವಾಗಿ ಸಿದ್ಧಮಾಡಿದನು.</verse>
				<verse number="6">ತನ್ನ ಮಗ ಸೊಲೊಮೋನನನ್ನು ಕಳುಹಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಆಲಯವನ್ನು ಕಟ್ಟಿಸಲು ಅವನಿಗೆ ಆಜ್ಞಾಪಿಸಿದನು.</verse>
				<verse number="7">ದಾವೀದನು ಸೊಲೊಮೋನನಿಗೆ, “ನನ್ನ ಮಗನೇ, ನಾನು ನನ್ನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಆಲಯವನ್ನು ಕಟ್ಟಿಸಬೇಕೆಂಬುದು ನನ್ನ ಹೃದಯದಲ್ಲಿ ಇತ್ತು.</verse>
				<verse number="8">ಆದರೆ ಯೆಹೋವ ದೇವರಿಂದ ನನಗೆ ಉಂಟಾದ ವಾಕ್ಯವೇನೆಂದರೆ: ‘ನೀನು ಬಹು ರಕ್ತವನ್ನು ಚೆಲ್ಲಿದ್ದೀಯೆ; ಮಹಾ ಯುದ್ಧಗಳನ್ನು ಮಾಡಿದ್ದೀಯೆ; ನೀನು ನನ್ನ ಹೆಸರಿಗೆ ಮನೆಯನ್ನು ಕಟ್ಟಿಸಬೇಡ. ಏಕೆಂದರೆ ನೀನು ನನ್ನ ಸಮ್ಮುಖದಲ್ಲಿ ಭೂಮಿಯ ಮೇಲೆ ಬಹಳ ರಕ್ತವನ್ನು ಚೆಲ್ಲಿದಿ.</verse>
				<verse number="9">ಶಾಂತಿ ಸಮಾಧಾನದ ಮನುಷ್ಯನಾಗಿರುವ ಒಬ್ಬ ಮಗನು ನಿನಗೆ ಹುಟ್ಟುವನು. ಸುತ್ತಲಿರುವ ಅವನ ಸಮಸ್ತ ಶತ್ರುಗಳಿಂದ ನಾನು ಅವನಿಗೆ ವಿಶ್ರಾಂತಿಯನ್ನು ಕೊಡುವೆನು. ಅವನಿಗೆ ಸೊಲೊಮೋನನೆಂಬ ಹೆಸರಿರುವುದು. ಅವನ ದಿವಸಗಳಲ್ಲಿ ನಾನು ಇಸ್ರಾಯೇಲಿಗೆ ಶಾಂತಿ ಸಮಾಧಾನವನ್ನೂ ಕೊಡುವೆನು.</verse>
				<verse number="10">ಅವನು ನನ್ನ ನಾಮಕ್ಕೆ ಆಲಯವನ್ನು ಕಟ್ಟಿಸುವನು. ಅವನು ನನ್ನ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು. ಇಸ್ರಾಯೇಲಿನ ಮೇಲೆ ಅವನ ರಾಜ್ಯದ ಸಿಂಹಾಸನವನ್ನು ಯುಗಯುಗಾಂತರಕ್ಕೂ ಸ್ಥಿರಪಡಿಸುವೆನು,’ ಎಂದು ಹೇಳಿದ್ದಾರೆ.</verse>
				<verse number="11">“ನನ್ನ ಮಗನೇ, ಯೆಹೋವ ದೇವರು ನಿನ್ನನ್ನು ಕುರಿತು ಹೇಳಿದ ಪ್ರಕಾರ, ನೀನು ಕೃತಾರ್ಥನಾಗಿ, ನೀನು ನಿನ್ನ ದೇವರಾದ ಯೆಹೋವ ದೇವರ ಆಲಯವನ್ನು ಕಟ್ಟಿಸುವಂತೆ ಅವರು ನಿನ್ನ ಸಂಗಡ ಇರಲಿ.</verse>
				<verse number="12">ನೀನು ನಿನ್ನ ದೇವರಾದ ಯೆಹೋವ ದೇವರ ನಿಯಮವನ್ನು ಕೈಗೊಳ್ಳುವಂತೆ ದೇವರು ನಿನಗೆ ಬುದ್ಧಿಯನ್ನೂ, ಗ್ರಹಿಕೆಯನ್ನೂ ಕೊಟ್ಟು ಇಸ್ರಾಯೇಲನ್ನು ಕುರಿತು ನಿನಗೆ ಆಜ್ಞಾಪಿಸಲಿ.</verse>
				<verse number="13">ಯೆಹೋವ ದೇವರು ಇಸ್ರಾಯೇಲನ್ನು ಕುರಿತು ಮೋಶೆಗೆ ಆಜ್ಞಾಪಿಸಿದ ನ್ಯಾಯವಿಧಿಗಳನ್ನು ಕೈಗೊಳ್ಳಲು ನೀನು ಜಾಗ್ರತೆಯಾಗಿರು. ಆಗ ಸಫಲನಾಗುವಿ. ಬಲವಾಗಿರು, ದೃಢವಾಗಿರು. ಭಯಪಡಬೇಡ, ಹೆದರಬೇಡ.</verse>
				<verse number="14">“ಇಗೋ, ಕಷ್ಟಪಟ್ಟು ನಾನು ಯೆಹೋವ ದೇವರ ಆಲಯಕ್ಕೋಸ್ಕರ ಮೂರು ಸಾವಿರದ ನಾನೂರ ಎಪ್ಪತ್ತು ಮೆಟ್ರಿಕ್ ಟನ್ ಬಂಗಾರವನ್ನೂ, ಮೂವತ್ತ ನಾಲ್ಕು ಸಾವಿರದ ಐನೂರು ಮೆಟ್ರಿಕ್ ಟನ್ ಬೆಳ್ಳಿಯನ್ನೂ, ಲೆಕ್ಕವಿಲ್ಲದಷ್ಟು ಕಂಚನ್ನೂ, ಕಬ್ಬಿಣವನ್ನೂ ಮರಗಳನ್ನೂ, ಕಲ್ಲುಗಳನ್ನೂ ಸಿದ್ಧಮಾಡಿದ್ದೇನೆ. ನೀನು ಅವುಗಳಿಗೆ ಸೇರಿಸಬಹುದು.</verse>
				<verse number="15">ಇದಲ್ಲದೆ ನಿನ್ನ ಬಳಿಯಲ್ಲಿ ಕೆಲಸದವರೂ, ಕಲ್ಲು ಕೆಲಸದವರೂ, ಕಲ್ಲುಕುಟಿಗರೂ, ಬಡಗಿಯವರೂ, ಸಮಸ್ತ ವಿವಿಧ ಕೆಲಸದ ಪ್ರವೀಣರೂ ಅನೇಕ ಮಂದಿ ಇದ್ದಾರೆ.</verse>
				<verse number="16">ಚಿನ್ನ, ಬೆಳ್ಳಿ, ಕಂಚು, ಕಬ್ಬಿಣ, ಮುಂತಾದವುಗಳಲ್ಲಿ ನಿಪುಣರು ಲೆಕ್ಕವಿಲ್ಲದಷ್ಟು ಇದ್ದಾರೆ. ಎದ್ದು ಕೆಲಸ ಮಾಡು, ಯೆಹೋವ ದೇವರು ನಿನ್ನ ಸಂಗಡ ಇರಲಿ,” ಎಂದನು.</verse>
				<verse number="17">ಇದಲ್ಲದೆ, ದಾವೀದನು ತನ್ನ ಮಗ ಸೊಲೊಮೋನನಿಗೆ ಸಹಾಯಮಾಡಲು ಇಸ್ರಾಯೇಲಿನ ಪ್ರಧಾನರಿಗೆ ಆಜ್ಞಾಪಿಸಿ ಹೇಳಿದ್ದೇನೆಂದರೆ,</verse>
				<verse number="18">“ನಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ, ಅಲ್ಲವೇ? ಎಲ್ಲಾ ಕಡೆಗಳಲ್ಲಿ ನಿಮಗೆ ವಿಶ್ರಾಂತಿ ಕೊಟ್ಟಿದ್ದಾರೆ, ಅಲ್ಲವೇ? ನಿಶ್ಚಯವಾಗಿ ಅವರು ದೇಶ ನಿವಾಸಿಗಳನ್ನು ನನ್ನ ಕೈಯಲ್ಲಿ ಒಪ್ಪಿಸಿದ್ದರಿಂದ, ದೇಶವು ಯೆಹೋವ ದೇವರ ಮುಂದೆಯೂ, ಅವರ ಜನರ ಮುಂದೆಯೂ ಸ್ವಾಧೀನವಾಯಿತು.</verse>
				<verse number="19">ನಿಮ್ಮ ದೇವರಾದ ಯೆಹೋವ ದೇವರನ್ನು ಹುಡುಕಲು ನಿಮ್ಮ ಹೃದಯವನ್ನೂ, ನಿಮ್ಮ ಪ್ರಾಣವನ್ನೂ ಒಪ್ಪಿಸಿ, ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ದೇವರ ಪರಿಶುದ್ಧ ಪಾತ್ರೆಗಳನ್ನು ಯೆಹೋವ ದೇವರ ನಾಮಕ್ಕಾಗಿ ಕಟ್ಟಲಾಗುವ ಆಲಯದೊಳಗೆ ತರುವ ಹಾಗೆ, ಎದ್ದು ಯೆಹೋವ ದೇವರಾದ ದೇವರಿಗೆ ಪರಿಶುದ್ಧ ಸ್ಥಳವನ್ನು ಕಟ್ಟಿಸಿರಿ,” ಎಂದನು.</verse>
			</chapter>
			<chapter number="23">
				<verse number="1">ದಾವೀದನು ಮುದುಕನಾದ ಮೇಲೆ ತನ್ನ ಮಗ ಸೊಲೊಮೋನನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಮಾಡಿದನು.</verse>
				<verse number="2">ಇದಲ್ಲದೆ ತಾನು ಇಸ್ರಾಯೇಲಿನ ಸಮಸ್ತ ಪ್ರಧಾನರನ್ನೂ ಯಾಜಕರನ್ನೂ ಲೇವಿಯರನ್ನೂ ಒಟ್ಟುಗೂಡಿಸಿ ಬರಮಾಡಿದನು.</verse>
				<verse number="3">ಲೇವಿಯರು ಮೂವತ್ತು ವರ್ಷ ಪ್ರಾಯದವರು ಮೊದಲುಗೊಂಡು ಎಣಿಕೆಯಾಗಿದ್ದರು. ಅವರ ಪುರುಷರ ಲೆಕ್ಕವು ಮೂವತ್ತೆಂಟು ಸಾವಿರವಾಗಿತ್ತು.</verse>
				<verse number="4">ದಾವೀದನು ಹೇಳಿದ್ದೇನೆಂದರೆ, “ಇವರಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಯೆಹೋವ ದೇವರ ಮನೆಯ ಕೆಲಸವನ್ನು ನಡಿಸುವವರಾಗಿದ್ದರು. ಮತ್ತು ಆರು ಸಾವಿರ ಮಂದಿ ಪಾರುಪತ್ಯಗಾರರೂ ನ್ಯಾಯಾಧಿಪತಿಗಳೂ ಆಗಿದ್ದರು.</verse>
				<verse number="5">ಇದಲ್ಲದೆ ನಾಲ್ಕು ಸಾವಿರ ಮಂದಿ ದ್ವಾರಪಾಲಕರಾಗಿದ್ದರು. ನಾಲ್ಕು ಸಾವಿರ ಮಂದಿ ಸ್ತುತಿಸುವುದಕ್ಕೆ ತಾನು ಸಿದ್ಧಮಾಡಿದ ವಾದ್ಯಗಳಿಂದ ಯೆಹೋವ ದೇವರನ್ನು ಸ್ತುತಿಸಿದರು.”</verse>
				<verse number="6">ಇದಲ್ಲದೆ ದಾವೀದನು ಗೇರ್ಷೋನ್ಯರು, ಕೊಹಾತ್ಯರು, ಮೆರಾರೀಯರು ಎಂಬ ಲೇವಿಯರನ್ನು ಮೂರು ವರ್ಗಗಳಾಗಿ ವಿಭಾಗಿಸಿದನು.</verse>
				<verse number="7">ಗೇರ್ಷೋನ್ಯರಲ್ಲಿ, ಲದ್ದಾನ್ ಮತ್ತು ಶಿಮ್ಮೀ.</verse>
				<verse number="8">ಲದ್ದಾನನ ಪುತ್ರರು: ಮೊದಲನೆಯವನು ಯೆಹೀಯೇಲ್, ಜೇತಾಮ್, ಯೋಯೇಲ್ ಎಂಬ ಮೂರು ಮಕ್ಕಳಿದ್ದರು.</verse>
				<verse number="9">ಶಿಮ್ಮೀಯ ಪುತ್ರರು: ಶೆಲೋಮೋತ್, ಹಜೀಯೇಲ್, ಹಾರಾನ್ ಎಂಬ ಮೂರು ಮಂದಿಯು. ಇವರು ಲದ್ದಾನನ ಕುಟುಂಬಗಳಲ್ಲಿ ಮುಖ್ಯಸ್ಥರಾಗಿದ್ದರು.</verse>
				<verse number="10">ಶಿಮ್ಮೀಯ ಪುತ್ರರು: ಯಹತ್, ಜೀನ, ಯೆಯೂಷ್, ಬೆರೀಯ ಶಿಮ್ಮನ ಈ ನಾಲ್ಕು ಮಂದಿ ಪುತ್ರರಲ್ಲಿ</verse>
				<verse number="11">ಯಹತನು ಮೊದಲನೆಯವನು, ಜೀಜನು ಎರಡನೆಯವನಾಗಿದ್ದನು. ಯೆಯೂಷನಿಗೂ ಬೆರೀಯನಿಗೂ ಹೆಚ್ಚು ಮಕ್ಕಳು ಇಲ್ಲದ್ದರಿಂದ ಇವರು ತಮ್ಮ ತಂದೆಯ ಮನೆಯಲ್ಲಿ ಒಂದೇ ಲೆಕ್ಕವಾಗಿ ಎಣಿಕೆಯಾಗಿದ್ದರು.</verse>
				<verse number="12">ಕೊಹಾತನ ಪುತ್ರರು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್ ಎಂಬ ನಾಲ್ಕು ಮಂದಿ ಮಕ್ಕಳಿದ್ದರು.</verse>
				<verse number="13">ಅಮ್ರಾಮನ ಪುತ್ರರು: ಆರೋನ್ ಮತ್ತು ಮೋಶೆ; ಆರೋನನನ್ನು ಮತ್ತು ಅವನ ಪುತ್ರರನ್ನು ಮಹಾಪರಿಶುದ್ಧವಾದ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಶಾಶ್ವತವಾಗಿ ಪ್ರತ್ಯೇಕಿಸಲಾಯಿತು. ಇವರು ಯೆಹೋವ ದೇವರ ಸನ್ನಿಧಿಯಲ್ಲಿ ಸದಾಕಾಲ ಧೂಪಹಾಕುವವರೂ, ಅವರ ಸೇವೆ ಮಾಡುವವರೂ, ಅವರ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿದ್ದರು.</verse>
				<verse number="14">ದೇವರ ಮನುಷ್ಯನಾದ ಮೋಶೆಯಾದರೋ, ಅವನ ಪುತ್ರರು ಲೇವಿಯ ಗೋತ್ರದಲ್ಲಿ ಲೆಕ್ಕಿತರಾಗಿದ್ದರು.</verse>
				<verse number="15">ಮೋಶೆಯ ಪುತ್ರರು: ಗೇರ್ಷೋಮ್ ಮತ್ತು ಎಲೀಯೆಜೆರ್.</verse>
				<verse number="16">ಗೇರ್ಷೋಮನ ಪುತ್ರರಲ್ಲಿ ಶೆಬೂಯೇಲನು ಮೊದಲನೆಯವನಾಗಿದ್ದನು.</verse>
				<verse number="17">ಎಲೀಯೆಜೆರನ ಪುತ್ರರು: ಮೊದಲನೆಯವನಾದ ರೆಹಬ್ಯನು. ಇವನ ಹೊರತಾಗಿ ಎಲೀಯೆಜೆರನಿಗೆ ಬೇರೆ ಪುತ್ರರಿಲ್ಲ; ಆದರೆ ರೆಹಬ್ಯನ ಪುತ್ರರು ಬಹಳ ಮಂದಿ ಇದ್ದರು.</verse>
				<verse number="18">ಇಚ್ಹಾರನ ಪುತ್ರರಲ್ಲಿ ಶೆಲೋಮೋತನು ಮೊದಲನೆಯವನಾಗಿದ್ದನು.</verse>
				<verse number="19">ಹೆಬ್ರೋನನ ಪುತ್ರರಲ್ಲಿ ಯೆರೀಯ ಮೊದಲನೆಯವನೂ ಅಮರ್ಯ ಎರಡನೆಯವನು, ಯಹಜಿಯೇಲ್ ಮೂರನೆಯವನು, ಯೆಕಮ್ಮಾಮ್ ನಾಲ್ಕನೆಯವನು.</verse>
				<verse number="20">ಉಜ್ಜೀಯೇಲನ ಪುತ್ರರಲ್ಲಿ ಮೀಕನು ಮೊದಲನೆಯವನು, ಇಷೀಯನು ಎರಡನೆಯವನು.</verse>
				<verse number="21">ಮೆರಾರೀಯ ಪುತ್ರರು: ಮಹ್ಲೀ ಮತ್ತು ಮೂಷೀ. ಮಹ್ಲೀಯ ಪುತ್ರರು: ಎಲಿಯಾಜರ್ ಮತ್ತು ಕೀಷ್.</verse>
				<verse number="22">ಎಲಿಯಾಜರನು ಗಂಡುಮಕ್ಕಳಿಲ್ಲದೆ ಸತ್ತನು. ಅವನಿಗೆ ಪುತ್ರಿಯರು ಮಾತ್ರ ಇದ್ದರು; ಇವರು ತಮ್ಮ ಬಂಧುಗಳಾದ ಕೀಷನ ಪುತ್ರರೊಂದಿಗೆ ಮದುವೆಯಾದರು.</verse>
				<verse number="23">ಮೂಷೀಯ ಪುತ್ರರು: ಮಹ್ಲೀ, ಏದೆರ್, ಯೆರೇಮೋತ್ ಎಂಬ ಈ ಮೂರು ಮಂದಿ.</verse>
				<verse number="24">ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಪುತ್ರರಾಗಿದ್ದರು. ತಮ್ಮ ಹೆಸರುಗಳಿಂದ, ಎಣಿಕೆಯಾಗಿದ್ದ ಇವರು ತಮ್ಮ ಕುಟುಂಬಗಳಲ್ಲಿ ಮುಖ್ಯಸ್ಥರಾಗಿದ್ದರು. ಇವರು ಇಪ್ಪತ್ತು ವರ್ಷ ಪ್ರಾಯದವರು ಮೊದಲುಗೊಂಡು, ಯೆಹೋವ ದೇವರ ಮನೆಯ ಸೇವೆಗೋಸ್ಕರ ಕೆಲಸಮಾಡಿದರು.</verse>
				<verse number="25">ದಾವೀದನು, “ಇಸ್ರಾಯೇಲಿನ ದೇವರಾದ ಯೆಹೋವ ದೇವರು, ಅವರು ಯುಗಯುಗಾಂತರಕ್ಕೂ ಯೆರೂಸಲೇಮಿನಲ್ಲಿ ವಾಸಿಸುವ ಹಾಗೆ ತಮ್ಮ ಜನರಿಗೆ ವಿಶ್ರಾಂತಿಯನ್ನು ಕೊಟ್ಟಿದ್ದಾರೆ,” ಎಂದು ಹೇಳಿ,</verse>
				<verse number="26">ಲೇವಿಯರನ್ನು ಕುರಿತು ಅವರು ಗುಡಾರವನ್ನೂ, ಅವರ ಸೇವೆಗೋಸ್ಕರ ಅದರ ಪಾತ್ರೆಗಳನ್ನೂ ಇನ್ನು ಮೇಲೆ ಹೊರುವ ಕೆಲಸವಿಲ್ಲವೆಂದು ಹೇಳಿದ್ದನು.</verse>
				<verse number="27">ಏಕೆಂದರೆ ದಾವೀದನ ಕಡೇ ಮಾತುಗಳ ಪ್ರಕಾರ, ಲೇವಿಯರು ಇಪ್ಪತ್ತು ವರ್ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯದವರು ಮೊದಲುಗೊಂಡು ಎಣಿಕೆಯಾಗಿದ್ದರು.</verse>
				<verse number="28">ಅವರು ಆರೋನನ ವಂಶಸ್ಥರ ಕೈಕೆಳಗಿದ್ದುಕೊಂಡು ಯೆಹೋವ ದೇವರ ಆಲಯದ ಸೇವೆಗೋಸ್ಕರ ಅಂಗಳಗಳಲ್ಲಿಯೂ ಕೊಠಡಿಗಳಲ್ಲಿಯೂ ಸಮಸ್ತ ಪರಿಶುದ್ಧ ಸಾಮಗ್ರಿಗಳನ್ನು ಶುದ್ಧ ಮಾಡುವುದರಲ್ಲಿಯೂ,</verse>
				<verse number="29">ಯೆಹೋವ ದೇವರ ಮಂದಿರದ ಸೇವೆಯ ಕಾರ್ಯದಲ್ಲಿರುವ ಸಮ್ಮುಖದ ರೊಟ್ಟಿಗೋಸ್ಕರವೂ, ಅರ್ಪಣೆ ಬಲಿಯ ನಯವಾದ ಹಿಟ್ಟಿಗೋಸ್ಕರವೂ, ಹುಳಿಯಿಲ್ಲದ ರೊಟ್ಟಿಗಳಿಗೋಸ್ಕರವೂ, ಬಾಂಡ್ಲಿಯಲ್ಲಿ ಮಾಡಿದ್ದಕ್ಕೋಸ್ಕರವೂ, ಕರಿದಿದ್ದಕ್ಕೋಸ್ಕರವೂ, ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳ ಬಳಿಯಲ್ಲಿ ಅವರಿಗೆ ನೇಮಕವಾಗಿತ್ತು.</verse>
				<verse number="30">ಇದಲ್ಲದೆ ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ ನಿಂತು, ಯೆಹೋವ ದೇವರನ್ನು ಕೊಂಡಾಡುವುದಕ್ಕೂ, ಯೆಹೋವ ದೇವರನ್ನು ಸ್ತುತಿಸುವುದಕ್ಕೂ,</verse>
				<verse number="31">ಯೆಹೋವ ದೇವರ ಮುಂದೆ ನಿರಂತರವಾಗಿ ಅವರಿಗೆ ಆಜ್ಞಾಪಿಸಿದ ಕಟ್ಟಳೆಯ ಪ್ರಕಾರವಾಗಿ ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ನೇಮಕವಾದ ಹಬ್ಬಗಳಲ್ಲಿಯೂ ಲೆಕ್ಕದ ಪ್ರಕಾರ ಎಲ್ಲಾ ದಹನಬಲಿಗಳನ್ನು ಅರ್ಪಿಸುವುದು.</verse>
				<verse number="32">ಯೆಹೋವ ದೇವರ ಮನೆಯ ಸೇವೆಯಲ್ಲಿ ದೇವದರ್ಶನ ಗುಡಾರದ ಕಾವಲನ್ನೂ, ಪರಿಶುದ್ಧ ಸ್ಥಾನದ ಕಾವಲನ್ನೂ, ತಮ್ಮ ಸಹೋದರರಾದ ಆರೋನನ ಪುತ್ರರ ಆಜ್ಞೆಯನ್ನೂ ಕೈಗೊಳ್ಳುವುದು ಅವರಿಗೆ ನೇಮಕವಾಗಿತ್ತು.</verse>
			</chapter>
			<chapter number="24">
				<verse number="1">ಆರೋನನ ಪುತ್ರರಲ್ಲಿ ವರ್ಗಗಳಾಗಿ ವಿಭಾಗ ಆದವರು ಇವರೇ. ಆರೋನನ ಪುತ್ರರು: ನಾದಾಬ್, ಅಬೀಹೂ, ಎಲಿಯಾಜರ್ ಮತ್ತು ಈತಾಮಾರ್.</verse>
				<verse number="2">ಆದರೆ ನಾದಾಬ್ ಮತ್ತು ಅಬೀಹೂ ತಮ್ಮ ತಂದೆಗಿಂತ ಮುಂಚೆ ಸತ್ತು ಮಕ್ಕಳಿಲ್ಲದೆ ಇದ್ದುದರಿಂದ ಎಲಿಯಾಜರನೂ, ಈತಾಮಾರನೂ ಯಾಜಕ ಸೇವೆ ಮಾಡಿದರು.</verse>
				<verse number="3">ಆದ್ದರಿಂದ ದಾವೀದನು ಎಲಿಯಾಜರನ ಮಕ್ಕಳಲ್ಲಿ ಚಾದೋಕನಿಗೂ, ಈತಾಮಾರನ ಮಕ್ಕಳಲ್ಲಿ ಅಹೀಮೆಲೆಕನಿಗೂ ಅವರ ಸೇವೆಯಲ್ಲಿರುವ ಪದ್ದತಿಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು.</verse>
				<verse number="4">ಈತಾಮಾರನ ಪುತ್ರರಿಗಿಂತ ಎಲಿಯಾಜರನ ಪುತ್ರರಲ್ಲಿ ಮುಖ್ಯಸ್ಥರು ಹೆಚ್ಚಾಗಿದ್ದುದರಿಂದ, ಅವರು ಸಹ ಹೀಗೆಯೇ ವಿಭಾಗಿಸಿದ್ದರು. ಎಲಿಯಾಜರನ ಪುತ್ರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಹದಿನಾರು ಮಂದಿ ಮುಖ್ಯಸ್ಥರು. ಈತಾಮಾರನ ಪುತ್ರರಲ್ಲಿ ತಮ್ಮ ಪಿತೃಗಳ ಮನೆಯ ಪ್ರಕಾರ ಎಂಟು ಮಂದಿ ಮುಖ್ಯಸ್ಥರು.</verse>
				<verse number="5">ಇವರು ಸಹ ಚೀಟುಹಾಕುವ ಮೂಲಕ ನಿಷ್ಪಕ್ಷಪಾತವಾಗಿ ವಿಭಾಗವಾಗಿದ್ದರು. ಏಕೆಂದರೆ ಪರಿಶುದ್ಧ ಸ್ಥಾನದ ಪ್ರಧಾನರೂ, ದೇವರ ಪ್ರಧಾನರೂ ಎಲಿಯಾಜರನ ಪುತ್ರರೂ, ಈತಾಮಾರನ ಪುತ್ರರೂ ಇದ್ದರು.</verse>
				<verse number="6">ಇದಲ್ಲದೆ ಲೇವಿಯರಲ್ಲಿ ಒಬ್ಬನಾದಂಥ ನೆತನೆಯೇಲ್ ಇವನ ಮಗ ಲೇಖಕನಾದ ಶೆಮಾಯನು ಅರಸನ ಮುಂದೆಯೂ; ಪ್ರಧಾನರು, ಯಾಜಕನಾದ ಚಾದೋಕನು, ಅಬಿಯಾತರನ ಮಗ ಅಹೀಮೆಲೆಕನು, ಯಾಜಕರ ಲೇವಿಯರ ಪಿತೃಗಳ ಮುಖ್ಯಸ್ಥರ ಮುಂದೆಯೂ ಅವರ ಹೆಸರುಗಳನ್ನು ಬರೆದನು. ಎಲಿಯಾಜರನಿಗೋಸ್ಕರ ಒಂದು ಶ್ರೇಷ್ಠ ಮನೆ ತೆಗೆದುಕೊಳ್ಳಲಾಯಿತು. ಅದರಂತೆಯೇ, ಈತಾಮಾರನಿಗೋಸ್ಕರವೂ ಒಂದು ತೆಗೆದುಕೊಳ್ಳಲಾಯಿತು.</verse>
				<verse number="7">ಮೊದಲನೆಯ ಚೀಟು ಯೆಹೋಯಾರೀಬನಿಗೆ ಬಿದ್ದಿತು; ಎರಡನೆಯದು ಯೆದಾಯನಿಗೆ,</verse>
				<verse number="8">ಮೂರನೆಯದು ಹಾರಿಮನಿಗೆ; ನಾಲ್ಕನೆಯದು ಸೆಯೋರೀಮನಿಗೆ;</verse>
				<verse number="9">ಐದನೆಯದು ಮಲ್ಕೀಯನಿಗೆ; ಆರನೆಯದು ಮಿಯಾಮಿನನಿಗೆ;</verse>
				<verse number="10">ಏಳನೆಯದು ಹಕ್ಕೋಚನಿಗೆ; ಎಂಟನೆಯದು ಅಬೀಯನಿಗೆ;</verse>
				<verse number="11">ಒಂಬತ್ತನೆಯದು ಯೆಷೂವನಿಗೆ; ಹತ್ತನೆಯದು ಶೇಕನ್ಯನಿಗೆ;</verse>
				<verse number="12">ಹನ್ನೊಂದನೆಯದು ಎಲ್ಯಾಷೀಬನಿಗೆ; ಹನ್ನೆರಡನೆಯದು ಯಾಕೀಮನಿಗೆ,</verse>
				<verse number="13">ಹದಿಮೂರನೆಯದು ಹುಪ್ಪನಿಗೆ; ಹದಿನಾಲ್ಕನೆಯದು ಯೆಷೆಬಾಬನಿಗೆ;</verse>
				<verse number="14">ಹದಿನೈದನೆಯದು ಬಿಲ್ಗನಿಗೆ; ಹದಿನಾರನೆಯದು ಇಮ್ಮೇರನಿಗೆ;</verse>
				<verse number="15">ಹದಿನೇಳನೆಯದು ಹೇಜೀರನಿಗೆ; ಹದಿನೆಂಟನೆಯದು ಹಪಿಚ್ಚೇಚನಿಗೆ;</verse>
				<verse number="16">ಹತ್ತೊಂಬತ್ತನೆಯದು ಪೆತಹ್ಯನಿಗೆ; ಇಪ್ಪತ್ತನೆಯದು ಯೆಹೆಜ್ಕೇಲನಿಗೆ;</verse>
				<verse number="17">ಇಪ್ಪತ್ತೊಂದನೆಯದು ಯಾಕೀನನಿಗೆ; ಇಪ್ಪತ್ತೆರಡನೆಯದು ಗಾಮೂಲನಿಗೆ;</verse>
				<verse number="18">ಇಪ್ಪತ್ಮೂರನೆಯದು ದೆಲಾಯನಿಗೆ; ಇಪ್ಪತ್ನಾಲ್ಕನೆಯದು ಮಾಜ್ಯನಿಗೆ.</verse>
				<verse number="19">ಇವೇ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತಮ್ಮ ತಂದೆ ಆರೋನನಿಗೆ ಆಜ್ಞಾಪಿಸಿದ ಹಾಗೆ, ಅವನ ಕೈಕೆಳಗೆ ತಮ್ಮ ತಮ್ಮ ಕಟ್ಟಳೆಗಳ ಪ್ರಕಾರ, ಯೆಹೋವ ದೇವರ ಮನೆಯಲ್ಲಿ ಸೇವೆ ಮಾಡುವುದಕ್ಕೆ ಬರಬೇಕಾದ ಅವರ ನಿಯಮಗಳು.</verse>
				<verse number="20">ಲೇವಿಯ ವಂಶಜರಲ್ಲಿ ಉಳಿದವರು ಯಾರೆಂದರೆ: ಅಮ್ರಾಮನ ಕುಮಾರರಲ್ಲಿ ಶೂಬಾಯೇಲನು; ಶೂಬಾಯೇಲನ ಪುತ್ರರಲ್ಲಿ ಯೆಹ್ದೆಯಾಹನು.</verse>
				<verse number="21">ರೆಹಬ್ಯನನ್ನು ಕುರಿತು: ರೆಹಬ್ಯನ ಪುತ್ರರಲ್ಲಿ ಇಷೀಯನು ಮೊದಲನೆಯವನು.</verse>
				<verse number="22">ಇಚ್ಹಾರರಲ್ಲಿ ಶೆಲೋಮೋತನು ಮೊದಲನೆಯವನು. ಶೆಲೋಮೋತನ ಪುತ್ರರಲ್ಲಿ ಯಹತನು.</verse>
				<verse number="23">ಹೆಬ್ರೋನನ ಪುತ್ರರಲ್ಲಿ ಯೆರೀಯನು ಮೊದಲನೆಯವನು; ಎರಡನೆಯವನು ಅಮರ್ಯ; ಮೂರನೆಯವನು ಯಹಜಿಯೇಲ್; ನಾಲ್ಕನೆಯವನು ಯೆಕಮ್ಮಾಮ್.</verse>
				<verse number="24">ಉಜ್ಜೀಯೇಲನ ಕುಮಾರರಲ್ಲಿ ಮೀಕನು; ಮೀಕನ ಪುತ್ರರಲ್ಲಿ ಶಾಮೀರನು.</verse>
				<verse number="25">ಮೀಕನ ಸಹೋದರನು ಇಷೀಯನು; ಇಷೀಯನ ಪುತ್ರರಲ್ಲಿ ಜೆಕರ್ಯ.</verse>
				<verse number="26">ಮೆರಾರೀಯ ಪುತ್ರರಲ್ಲಿ ಮಹ್ಲೀ, ಮೂಷೀ; ಯಾಜ್ಯನ ಮಗನು ಬೆನೋನು.</verse>
				<verse number="27">ಮೆರಾರೀಯ ಪುತ್ರರಲ್ಲಿ ಯಾಜ್ಯನಿಗೆ ಬೆನೋ, ಶೋಹಮ್, ಜಕ್ಕೂರ್, ಇಬ್ರೀ ಎಂಬ ಪುತ್ರರಿದ್ದರು.</verse>
				<verse number="28">ಮಹ್ಲೀಯನಿಗೆ ಎಲಿಯಾಜರನು ಹುಟ್ಟಿದನು; ಎಲಿಯಾಜರನಿಗೆ ಪುತ್ರರಿರಲಿಲ್ಲ.</verse>
				<verse number="29">ಕೀಷನಿಂದ ಯೆರಹ್ಮೇಲನು.</verse>
				<verse number="30">ಮೂಷೀಯ ಪುತ್ರರು: ಮಹ್ಲೀ, ಏದೆರ್, ಯೆರೀಮೋತ್. ಇವರು ತಮ್ಮ ಕುಟುಂಬಗಳ ಪ್ರಕಾರ ಲೇವಿಯರ ಪುತ್ರರಾಗಿದ್ದರು.</verse>
				<verse number="31">ಇವರು ಹಾಗೆಯೇ ಅರಸನಾದ ದಾವೀದನ ಸಮ್ಮುಖದಲ್ಲಿಯೂ, ಚಾದೋಕನು, ಅಹೀಮೆಲೆಕನು, ಯಾಜಕರ ಮತ್ತು ಲೇವಿಯರ ಪಿತೃಗಳ ಮುಖ್ಯಸ್ಥರು, ಇವರ ಸಮ್ಮುಖದಲ್ಲಿಯೂ, ಆರೋನನ ಪುತ್ರರಾದ ತಮ್ಮ ಸಹೋದರರಿಗೆ ಎದುರಾಗಿ ಮುಖ್ಯಸ್ಥರಾದ ಪಿತೃಗಳು ತಮ್ಮ ಕಿರಿಯ ಸಹೋದರರಿಗೆದುರಾಗಿ ಚೀಟುಗಳನ್ನು ಹಾಕಿದರು.</verse>
			</chapter>
			<chapter number="25">
				<verse number="1">ಇದಲ್ಲದೆ ದಾವೀದನೂ, ಸೈನ್ಯಾಧಿಪತಿಗಳೂ ಆಸಾಫ್, ಹೇಮಾನ್, ಯೆದುತೂನ್; ಇವರ ಪುತ್ರರಲ್ಲಿ ಕಿನ್ನರಿಗಳಿಂದಲೂ, ವೀಣೆಗಳಿಂದಲೂ, ತಾಳಗಳಿಂದಲೂ ಪ್ರವಾದಿಸಲು ತಕ್ಕವರನ್ನು ಸೇವೆಗೆ ಪ್ರತ್ಯೇಕಿಸಿದರು. ಕೆಲಸದವರ ಲೆಕ್ಕವು ಅವರ ಸೇವೆಯ ಪ್ರಕಾರವಾಗಿತ್ತು.</verse>
				<verse number="2">ಅವರು ಯಾರೆಂದರೆ: ಆಸಾಫನ ಪುತ್ರರಲ್ಲಿ ಜಕ್ಕೂರ್, ಯೋಸೇಫ, ನೆತನ್ಯ, ಅಶರೇಲ; ಇವರು ಆಸಾಫನ ಕೈಕೆಳಗೆ ಪ್ರವಾದಿಸಿದರು. ಇವರು ಅರಸನ ಮೇಲ್ವಿಚಾರಣೆಯಲ್ಲಿದ್ದರು.</verse>
				<verse number="3">ಯೆದುತೂನನ ಪುತ್ರರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ. ಈ ಆರು ಮಂದಿಯು ಯೆದುತೂನನ ಪುತ್ರರು. ತಮ್ಮ ತಂದೆ ಯೆದುತೂನನ ಕೈಕೆಳಗೆ ಕಿನ್ನರಿಗಳನ್ನು ಬಾರಿಸಿ, ಯೆಹೋವ ದೇವರನ್ನು ಕೊಂಡಾಡಿ, ಸ್ತುತಿಸಿ ಪ್ರವಾದಿಸುತ್ತಿದ್ದರು.</verse>
				<verse number="4">ಹೇಮಾನನ ಪುತ್ರರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂಯೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ್, ಗಿದ್ದಲ್ತಿ, ರೋಮಮ್ತಿಯೆಜೆರ್, ಯೊಷ್ಬೆಕಾಷ, ಮಲ್ಲೋತಿ, ಹೋತೀರ್, ಮಹಜೀಯೋತ್.</verse>
				<verse number="5">ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೇಮಾನನ ಪುತ್ರರು. ದೇವರು ಹೇಮಾನನಿಗೆ ಹದಿನಾಲ್ಕು ಮಂದಿ ಪುತ್ರರನ್ನೂ, ಮೂರು ಮಂದಿ ಪುತ್ರಿಯರನ್ನೂ ಕೊಟ್ಟಿದ್ದರು.</verse>
				<verse number="6">ಯೆಹೋವ ದೇವರ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ, ಇವರೆಲ್ಲರೂ ತಮ್ಮ ತಂದೆಯ ನೇತೃತ್ವದಲ್ಲಿ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಹೀಗೆ ಆಸಾಫ್, ಯೆದುತೂನ್, ಹೇಮಾನರು ಅರಸನ ಸೇವೆಯಲ್ಲಿದ್ದರು.</verse>
				<verse number="7">ಹೀಗೆಯೇ ಅವರ ಲೆಕ್ಕವೂ, ಯೆಹೋವ ದೇವರ ಹಾಡುಗಳಲ್ಲಿ ತರಬೇತುಪಡೆದ ಸಮಸ್ತ ಪ್ರವೀಣರ ಲೆಕ್ಕ, ತಮ್ಮ ಸಹೋದರರ ಸಹಿತವಾಗಿ ಇನ್ನೂರ ಎಂಬತ್ತೆಂಟು ಮಂದಿಯಾಗಿದ್ದರು.</verse>
				<verse number="8">ಇದಲ್ಲದೆ ಹಿರಿಯರು ಕಿರಿಯರ ಹಾಗೆಯೂ, ಶಿಷ್ಯನು ಬೋಧಕನ ಹಾಗೆಯೂ ವರ್ಗಕ್ಕೆ ಎದುರಾಗಿ ವರ್ಗದವರು ಚೀಟುಗಳನ್ನು ಹಾಕಿದರು.</verse>
				<verse number="9">ಆಸಾಫನಿಗೋಸ್ಕರ ಮೊದಲನೆಯ ಚೀಟು ಯೋಸೇಫನಿಗೆ ಬಂತು. ಎರಡನೆಯದು ಗೆದಲ್ಯನಿಗೆ; ಅವನೂ, ಅವನ ಸಹೋದರರೂ, ಅವನ ಪುತ್ರರೂ ಹನ್ನೆರಡು ಮಂದಿ.</verse>
				<verse number="10">ಮೂರನೆಯದು ಜಕ್ಕೂರನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ;</verse>
				<verse number="11">ನಾಲ್ಕನೆಯದು ಇಚ್ರೀಗೆ; ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.</verse>
				<verse number="12">ಐದನೆಯದು ನೆತನ್ಯನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.</verse>
				<verse number="13">ಆರನೆಯದು ಬುಕ್ಕೀಯನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.</verse>
				<verse number="14">ಏಳನೆಯದು ಯೆಸರೇಲನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.</verse>
				<verse number="15">ಎಂಟನೆಯದು ಯೆಶಾಯನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.</verse>
				<verse number="16">ಒಂಬತ್ತನೆಯವನು ಮತ್ತನ್ಯ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.</verse>
				<verse number="17">ಹತ್ತನೆಯದು ಶಿಮ್ಮಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.</verse>
				<verse number="18">ಹನ್ನೊಂದನೆಯದು ಅಜರಯೇಲನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.</verse>
				<verse number="19">ಹನ್ನೆರಡನೆಯದು ಹಷಬ್ಯನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.</verse>
				<verse number="20">ಹದಿಮೂರನೆಯದು ಶುಬಯೇಲನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.</verse>
				<verse number="21">ಹದಿನಾಲ್ಕನೆಯವನು ಮತ್ತಿತ್ಯ; ಇವನೂ, ಇವನ ಸಹೋದರರೂ, ಮಕ್ಕಳೂ ಕೂಡಿ ಹನ್ನೆರಡು ಮಂದಿ.</verse>
				<verse number="22">ಹದಿನೈದನೆಯದು ಯೆರೆಮೋತನಿಗೆ; ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.</verse>
				<verse number="23">ಹದಿನಾರನೆಯದು ಹನನ್ಯನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.</verse>
				<verse number="24">ಹದಿನೇಳನೆಯದು ಯೊಷ್ಬೆಕಾಷನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.</verse>
				<verse number="25">ಹದಿನೆಂಟನೆಯದು ಹನಾನೀಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.</verse>
				<verse number="26">ಹತ್ತೊಂಬತ್ತನೆಯದು ಮಲ್ಲೋತಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.</verse>
				<verse number="27">ಇಪ್ಪತ್ತನೆಯದು ಎಲಿಯಾತನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.</verse>
				<verse number="28">ಇಪ್ಪತ್ತೊಂದನೆಯದು ಹೋತೀರನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.</verse>
				<verse number="29">ಇಪ್ಪತ್ತೆರಡನೆಯದು ಗಿದ್ದಲ್ತಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.</verse>
				<verse number="30">ಇಪ್ಪತ್ತಮೂರನೆಯದು ಮಹಜೀಯೋತನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.</verse>
				<verse number="31">ಇಪ್ಪತ್ತನಾಲ್ಕನೆಯದು ರೋಮಮ್ತಿಯೆಜೆರನಿಗೆ; ಅವನೂ, ಅವನ ಪುತ್ರರೂ, ಅವನ ಸಹೋದರರೂ ಹನ್ನೆರಡು ಮಂದಿ.</verse>
			</chapter>
			<chapter number="26">
				<verse number="1">ದ್ವಾರಪಾಲಕರ ವರ್ಗಗಳು: ಕೋರಹಿಯರೊಳಗೆ: ಆಸಾಫನ ಪುತ್ರರಲ್ಲಿ ಒಬ್ಬನಾಗಿರುವ ಕೋರೆಯ ಮಗನಾದ ಮೆಷೆಲೆಮ್ಯನು.</verse>
				<verse number="2">ಮೆಷೆಲೆಮ್ಯನ ಪುತ್ರರು: ಚೊಚ್ಚಲ ಮಗನು ಜೆಕರ್ಯನು; ಎರಡನೆಯವನು ಯೆದೀಯಯೇಲನು; ಮೂರನೆಯವನು ಜೆಬದ್ಯನು; ನಾಲ್ಕನೆಯವನು ಯತ್ನಿಯೇಲನು;</verse>
				<verse number="3">ಐದನೆಯವನು ಏಲಾಮನು; ಆರನೆಯವನು ಯೆಹೋಹಾನಾನನು; ಏಳನೆಯವನು ಎಲಿಹೋಯೇನೈನು.</verse>
				<verse number="4">ಓಬೇದ್ ಏದೋಮನ ಪುತ್ರರು: ಚೊಚ್ಚಲ ಮಗನು ಶೆಮಾಯ; ಎರಡನೆಯವನು ಯೆಹೋಜಾಬಾದ್; ಮೂರನೆಯವನು ಯೋವಾಹ; ನಾಲ್ಕನೆಯವನು ಸಾಕಾರ; ಐದನೆಯವನು ನೆತನೆಯೇಲ್;</verse>
				<verse number="5">ಆರನೆಯವನು ಅಮ್ಮಿಯೇಲ್; ಏಳನೆಯವನು ಇಸ್ಸಾಕಾರ್ ಮತ್ತು ಎಂಟನೆಯವನು ಪೆಯುಲ್ಲೆತೈ. ಓಬೇದ್ ಎದೋಮನು ದೇವರ ಆಶೀರ್ವಾದಕ್ಕೆ ಪಾತ್ರನಾಗಿದ್ದನು.</verse>
				<verse number="6">ಇದಲ್ಲದೆ ತನ್ನ ಮಗನಾದ ಶೆಮಾಯನಿಗೆ ತಮ್ಮ ತಂದೆಯ ಮನೆಯಲ್ಲಿ ಆಳುವ ಪುತ್ರರು ಹುಟ್ಟಿದರು, ಅವರು ಪರಾಕ್ರಮಶಾಲಿಗಳಾಗಿದ್ದರು.</verse>
				<verse number="7">ಶೆಮಾಯನ ಪುತ್ರರು ಯಾರೆಂದರೆ: ಒತ್ನಿಯು, ರೆಫಾಯೇಲನು, ಓಬೇದನು, ಎಲ್ಜಾಬಾದನು; ಇವರ ಸಹೋದರರಾದ ಪರಾಕ್ರಮವುಳ್ಳ ಎಲೀಹುವು, ಸೆಮಕ್ಯನು.</verse>
				<verse number="8">ಇವರೆಲ್ಲರು ಓಬೇದ್ ಏದೋಮನ ಪುತ್ರರು; ಇವರೂ, ತಮ್ಮ ಪುತ್ರರೂ, ತಮ್ಮ ಸಹೋದರರೂ ಸೇವೆಗೆ ಶಕ್ತಿಯುಳ್ಳ ಸ್ಥಿತಿವಂತರು; ಒಬೆದೆದೋಮನವರು ಅರವತ್ತೆರಡು ಮಂದಿಯಾಗಿದ್ದರು.</verse>
				<verse number="9">ಮೆಷೆಲೆಮ್ಯನಿಗೆ ಬಲವುಳ್ಳ ಪುತ್ರರೂ, ಸಹೋದರರೂ ಹದಿನೆಂಟು ಮಂದಿಯಾಗಿದ್ದರು.</verse>
				<verse number="10">ಇದಲ್ಲದೆ ಮೆರಾರೀಯ ಮಕ್ಕಳಲ್ಲಿರುವ ಹೋಸ ಎಂಬವನಿಗೆ ಮಕ್ಕಳಿದ್ದರು. ಮೊದಲನೆಯವನು ಶಿಮ್ರಿಯು; ಅವನು ಚೊಚ್ಚಲ ಮಗನಲ್ಲ; ಆದರೆ ಅವನ ತಂದೆ ಅವನನ್ನು ಮುಖ್ಯಸ್ಥನನ್ನಾಗಿ ಮಾಡಿದನು;</verse>
				<verse number="11">ಎರಡನೆಯವನು ಹಿಲ್ಕೀಯನು; ಮೂರನೆಯವನು ಟೆಬಲ್ಯನು; ನಾಲ್ಕನೆಯವನು ಜಕರೀಯನು. ಹೋಸನ ಸಮಸ್ತ ಪುತ್ರರು ಮತ್ತು ಸಹೋದರರೂ ಹದಿಮೂರು ಮಂದಿಯಾಗಿದ್ದರು.</verse>
				<verse number="12">ಇದರಲ್ಲಿ ದ್ವಾರಪಾಲಕರ ವರ್ಗಗಳು ಯೆಹೋವ ದೇವರ ಆಲಯದಲ್ಲಿ ಸೇವೆ ಮಾಡುವುದಕ್ಕೆ ವರ್ಗಕ್ಕೆದುರಾಗಿ ಮುಖ್ಯಸ್ಥರಲ್ಲಿ ವಿಭಾಗಿಸಲಾಗಿದ್ದವು.</verse>
				<verse number="13">ಅವರು ಕಿರಿಯರು ಹಿರಿಯರ ಹಾಗೆ ತಮ್ಮ ಪಿತೃಗಳ ಮನೆಯ ಪ್ರಕಾರ ಬಾಗಿಲಿಂದ ಬಾಗಿಲಿಗೂ ಚೀಟುಗಳನ್ನು ಹಾಕಿದರು.</verse>
				<verse number="14">ಪೂರ್ವದಿಕ್ಕಿನ ಭಾಗದ ಚೀಟು ಶೆಲೆಮ್ಯನಿಗೆ ಬಿತ್ತು. ಅವನ ಮಗ ಬುದ್ಧಿಯುಳ್ಳ ಆಲೋಚನೆಯವನಾಗಿರುವ ಜೆಕರ್ಯನಿಗೋಸ್ಕರ ಹಾಕಿದ ಚೀಟು ಉತ್ತರ ಭಾಗಕ್ಕೆ ಇತ್ತು.</verse>
				<verse number="15">ಓಬೇದ್ ಏದೋಮನಿಗೆ ದಕ್ಷಿಣ ಭಾಗ ಬಂತು. ಅವನ ಪುತ್ರರಿಗೆ ಉಗ್ರಾಣ ಮನೆ ಬಂತು.</verse>
				<verse number="16">ಶುಪ್ಪೀಮ್, ಹೋಸ ಎಂಬವರಿಗೆ ಪಶ್ಚಿಮದಲ್ಲಿರುವ ಶೆಲ್ಲೆಕೆತ್ ಎಂಬ ಬಾಗಿಲು ಬಂತು. ಅವು ಮೇಲಕ್ಕೆ ಹೋಗುವ ರಾಜಮಾರ್ಗದ ಬಳಿಯಲ್ಲಿ ಒಂದಕ್ಕೊಂದು ಎದುರಾಗಿ ವರ್ಗಗಳಿದ್ದವು.</verse>
				<verse number="17">ಪೂರ್ವ ಕಡೆಯಾಗಿ ಆರು ಮಂದಿ ಲೇವಿಯರಿದ್ದರು. ಉತ್ತರ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ, ದಕ್ಷಿಣ ಭಾಗವಾಗಿ ದಿನಕ್ಕೆ ನಾಲ್ಕು ಮಂದಿಯೂ ಉಗ್ರಾಣ ಮಂದಿರದ ಬಳಿಯಲ್ಲಿ ಇಬ್ಬರಿಬ್ಬರಾಗಿಯೂ,</verse>
				<verse number="18">ಪಶ್ಚಿಮ ಭಾಗವಾದ ದೇವಾಲಯದ ಅಂಗಳಕ್ಕೆ ಹೋಗುವ ರಾಜಮಾರ್ಗದಲ್ಲಿ ನಾಲ್ಕು ಮಂದಿಯೂ, ದೇವಾಲಯದ ಅಂಗಳ ಬಳಿಯಲ್ಲಿ ಇಬ್ಬರೂ ಇದ್ದರು.</verse>
				<verse number="19">ಕೋರಹೀಯರ ಪುತ್ರರಲ್ಲಿಯೂ, ಮೆರಾರೀಯ ಪುತ್ರರಲ್ಲಿಯೂ ವಿಭಾಗಿಸಿದ ದ್ವಾರಪಾಲಕರ ವರ್ಗಗಳು ಇವೆ.</verse>
				<verse number="20">ಇದಲ್ಲದೆ ಲೇವಿಯರಲ್ಲಿ ಅಹೀಯನು ದೇವರ ಆಲಯದ ಬೊಕ್ಕಸದ ಮೇಲೆಯೂ, ಪ್ರತಿಷ್ಠಿತವಾದವುಗಳ ಬೊಕ್ಕಸಗಳ ಮೇಲೆಯೂ ಅಧಿಕಾರಿಯಾಗಿದ್ದನು.</verse>
				<verse number="21">ಲದ್ದಾನನ ವಂಶಜರು: ಗೇರ್ಷೋನ್ಯನಾದ ಲದ್ದಾನನ ಪುತ್ರರು ಕುಟುಂಬಗಳ ಮುಖ್ಯಸ್ಥರಾಗಿದ್ದರು. ಈ ಗೇರ್ಷೋನ್ಯನಾದ ಲಡಾನನ ಮಗನು ಯೆಹೀಯೇಲನು.</verse>
				<verse number="22">ಯೆಹೀಯೇಲನ ಪುತ್ರರು ಜೇತಾಮನು, ಅವನ ಸಹೋದರನಾದ ಯೋಯೇಲನು; ಇವರು ಯೆಹೋವ ದೇವರ ಆಲಯದ ಬೊಕ್ಕಸಗಳ ಮೇಲೆ ಇದ್ದರು.</verse>
				<verse number="23">ಅಮ್ರಾಮಿಯರಲ್ಲಿಯೂ ಇಚ್ಹಾರರಲ್ಲಿಯೂ ಹೆಬ್ರೋನಿಯರಲ್ಲಿಯೂ ಉಜ್ಜೀಯೇಲರಲ್ಲಿಯೂ ಇವರ ಸಂತಾನದವರಲ್ಲಿ:</verse>
				<verse number="24">ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆಗಿರುವ ಶೆಬೂಯೇಲನು ಬೊಕ್ಕಸಗಳ ಮೇಲೆ ಅಧಿಕಾರಿಯಾಗಿದ್ದನು.</verse>
				<verse number="25">ಇವನ ಸಹೋದರರು, ಎಲೀಯೆಜೆರನ ಮಗನು ರೆಹಬ್ಯನು, ಇವನ ಮಗನು ಯೆಶಾಯನು, ಇವನ ಮಗನು ಯೋರಾಮ, ಇವನ ಮಗನು ಜಿಕ್ರಿಯು, ಇವನ ಮಗನು ಶೆಲೋಮೋತನು.</verse>
				<verse number="26">ಈ ಶೆಲೋಮೋತನೂ ಅವನ ಸಹೋದರರೂ ಅರಸನಾದ ದಾವೀದನೂ ಮುಖ್ಯಸ್ಥರಾದ ಪಿತೃಗಳೂ ಸೈನ್ಯಾಧಿಪತಿಗಳಾದ ಸಹಸ್ರಗಳ ಮೇಲೆಯೂ ಶತ್ರುಗಳ ಮೇಲೆಯೂ ಅಧಿಪತಿಗಳಾದವರೂ ಪ್ರತಿಷ್ಠೆ ಮಾಡಿದ ಪ್ರತಿಷ್ಠಿತವಾದವುಗಳ ಬೊಕ್ಕಸಗಳನ್ನು ಕಾಯುತ್ತಿದ್ದರು.</verse>
				<verse number="27">ಅವರು ಯೆಹೋವ ದೇವರ ಆಲಯವನ್ನು ದುರಸ್ತಿಪಡಿಸುವುದಕ್ಕೆ ಯುದ್ಧಗಳಿಂದಲೂ, ಕೊಳ್ಳೆಯಿಂದಲೂ ಸಂಪಾದಿಸಿದವುಗಳನ್ನು ಪ್ರತಿಷ್ಠೆ ಮಾಡಿದರು.</verse>
				<verse number="28">ಇದಲ್ಲದೆ ದರ್ಶಿಯಾದ ಸಮುಯೇಲನೂ, ಕೀಷನ ಮಗ ಸೌಲನೂ, ನೇರನ ಮಗ ಅಬ್ನೇರನೂ, ಚೆರೂಯಳ ಮಗ ಯೋವಾಬನೂ ಪ್ರತಿಷ್ಠೆ ಮಾಡಿದ್ದೆಲ್ಲವೂ ಮತ್ತು ಯಾರು ಪ್ರತಿಷ್ಠೆ ಮಾಡಿದ್ದರೋ, ಅದೆಲ್ಲವೂ ಶೆಲೋಮೋತನ ಕೈಕೆಳಗೂ, ಅವನ ಸಹೋದರರ ಕೈಕೆಳಗೂ ಇತ್ತು.</verse>
				<verse number="29">ಇಚ್ಹಾರರಲ್ಲಿ ಕೆನನ್ಯನನ್ನು, ಅವನ ಪುತ್ರರನ್ನು ಪಾರುಪತ್ಯಗಾರರಿಗೋಸ್ಕರವೂ, ನ್ಯಾಯಾಧಿಪತಿಗಳಿಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ನೇಮಿಸಲಾಗಿತ್ತು.</verse>
				<verse number="30">ಹೆಬ್ರೋನಿಯರಲ್ಲಿ ಬಲವುಳ್ಳವರಾದ ಹಷಬ್ಯನೂ, ಅವನ ಸಹೋದರರೂ ಯೆಹೋವ ದೇವರ ಸಮಸ್ತ ಕಾರ್ಯಗಳಲ್ಲಿಯೂ, ಅರಸನ ಸೇವೆಯಲ್ಲಿಯೂ ಸಾವಿರದ ಏಳು ನೂರು ಮಂದಿ ಪಶ್ಚಿಮವಾಗಿ ಯೊರ್ದನ್ ನದಿ ಈಚೆಯಲ್ಲಿ ಇಸ್ರಾಯೇಲರೊಳಗೆ ಅಧಿಪತಿಗಳಾಗಿದ್ದರು.</verse>
				<verse number="31">ಹೆಬ್ರೋನಿಯರಲ್ಲಿ ಯೆರೀಯನು ತನ್ನ ಪಿತೃಗಳ ಸಂತತಿಗಳ ಪ್ರಕಾರ ಹೆಬ್ರೋನ್ಯರಲ್ಲಿ ಮುಖ್ಯಸ್ಥನಾಗಿದ್ದನು. ಇವರು ದಾವೀದನ ಆಳಿಕೆಯ ನಲ್ವತ್ತನೆಯ ವರ್ಷದಲ್ಲಿ ಆಯ್ಕೆಯಾಗಿದ್ದರು. ಆಗ ಗಿಲ್ಯಾದಿನ ಯಜ್ಜೇರಿನಲ್ಲಿ ಅವರೊಳಗೆ ಬಲವುಳ್ಳ ಪರಾಕ್ರಮಶಾಲಿಗಳು ಸಿಕ್ಕಿದರು.</verse>
				<verse number="32">ಇದಲ್ಲದೆ ಬಲವುಳ್ಳವರಾದ ಯೆರೀಯನ ಸಹೋದರರು ಎರಡು ಸಾವಿರದ ಏಳು ನೂರು ಮಂದಿ ಕುಟುಂಬಗಳ ಮುಖ್ಯಸ್ಥರಾಗಿದ್ದರು. ಅರಸನಾದ ದಾವೀದನು ಇವರನ್ನು ದೇವರ ಸಮಸ್ತ ಕಾರ್ಯಗಳ ನಿಮಿತ್ತವಾಗಿಯೂ ರೂಬೇನ್ಯರ ಮೇಲೆಯೂ, ಗಾದ್ಯರ ಮೇಲೆಯೂ, ಮನಸ್ಸೆಯ ಅರ್ಧ ಗೋತ್ರದ ಮೇಲೆಯೂ ಅಧಿಪತಿಗಳಾಗಿ ಮಾಡಿದನು.</verse>
			</chapter>
			<chapter number="27">
				<verse number="1">ಇಸ್ರಾಯೇಲರು ತಮ್ಮ ಲೆಕ್ಕದ ಪ್ರಕಾರವಾಗಿ ಹೀಗೆಯೇ ಇದ್ದರು. ಹೇಗೆಂದರೆ, ಕುಟುಂಬಗಳ ಮುಖ್ಯಸ್ಥರೂ ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಅಧಿಪತಿಗಳೂ ವರ್ಷದ ಎಲ್ಲಾ ತಿಂಗಳುಗಳಲ್ಲಿ ಪ್ರತಿ ತಿಂಗಳು ಸರತಿಯಂತೆ ಬರುತ್ತಿದ್ದ ವರ್ಗಗಳ ಕಾರ್ಯಗಳಲ್ಲಿ ಅರಸನನ್ನು ಸೇವಿಸಿದ ಅವರ ಪಾರುಪತ್ಯಗಾರರೂ ಪ್ರತಿವರ್ಗದಲ್ಲಿ 24,000 ಮಂದಿಯಿದ್ದರು.</verse>
				<verse number="2">ಮೊದಲನೆಯ ತಿಂಗಳಿಗೋಸ್ಕರ ಮೊದಲನೆಯ ವರ್ಗದ ಮೇಲೆ ಜಬ್ದಿಯೇಲನ ಮಗ ಯಾಷೊಬ್ಬಾಮನು. ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.</verse>
				<verse number="3">ಮೊದಲನೆಯ ತಿಂಗಳಿನ ಸೈನ್ಯದ ಸಮಸ್ತ ಅಧಿಪತಿಗಳಲ್ಲಿದ್ದ ಪ್ರಧಾನನಾದವನು ಪೆರೆಚನ ಮಕ್ಕಳಲ್ಲಿ ಒಬ್ಬನಾಗಿದ್ದನು.</verse>
				<verse number="4">ಎರಡನೆಯ ತಿಂಗಳಿನ ವರ್ಗದ ಮೇಲೆ ಅಹೋಹ್ಯನಾದ ದೊದಾಯಿಯು. ಅವನ ವರ್ಗದಲ್ಲಿ ಮಿಕ್ಲೋತನು ನಾಯಕನಾಗಿದ್ದನು. ಅವನ ವರ್ಗದಲ್ಲಿ 24,000 ಜನರಿದ್ದರು.</verse>
				<verse number="5">ಮೂರನೆಯ ತಿಂಗಳಿನ ಸೈನ್ಯದ ಮೂರನೆಯ ಅಧಿಪತಿಯು, ಯಾಜಕನಾಗಿರುವ ಯೆಹೋಯಾದಾವನ ಮಗ ಬೆನಾಯನು. ಅವನ ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಜನರು.</verse>
				<verse number="6">ಈ ಬೆನಾಯನು ಮೂವತ್ತು ಮಂದಿಯಲ್ಲಿ ಪರಾಕ್ರಮಶಾಲಿಯಾದವನಾಗಿ ಮೂವತ್ತು ಮಂದಿಯ ಮೇಲೆ ಮುಖ್ಯಸ್ಥನಾಗಿದ್ದನು. ಅವನ ವರ್ಗದಲ್ಲಿ ಅವನ ಮಗ ಅಮ್ಮೀಜಾಬಾದನು ಇದ್ದನು.</verse>
				<verse number="7">ನಾಲ್ಕನೆಯ ತಿಂಗಳಿನ ನಾಲ್ಕನೆಯವನು ಯೋವಾಬನ ಸಹೋದರನಾದ ಅಸಾಯೇಲನು; ಅವನ ತರುವಾಯ ಅವನ ಮಗ ಜೆಬದ್ಯನು; ಅವನ ವರ್ಗದಲ್ಲಿ 24,000 ಜನರು.</verse>
				<verse number="8">ಐದನೆಯ ತಿಂಗಳಿನ ಐದನೆಯ ಅಧಿಪತಿಯು ಇಜ್ರಾಹನಾದ ಶಮ್ಹೂತನು; ಅವನ ವರ್ಗದಲ್ಲಿ 24,000 ಜನರು.</verse>
				<verse number="9">ಆರನೆಯ ತಿಂಗಳಿನ ಆರನೆಯವನು ತೆಕೋವಿಯನಾಗಿರುವ ಇಕ್ಕೇಷನ ಮಗ ಈರನು; ಅವನ ವರ್ಗದಲ್ಲಿ 24,000 ಜನರು.</verse>
				<verse number="10">ಏಳನೆಯ ತಿಂಗಳಿನ ಏಳನೆಯವನು ಎಫ್ರಾಯೀಮನ ಮಕ್ಕಳಲ್ಲಿ ಒಬ್ಬನಾಗಿರುವ ಪೆಲೋನ್ಯನಾದ ಹೆಲೆಚನು; ಅವನ ವರ್ಗದಲ್ಲಿ 24,000 ಜನರು.</verse>
				<verse number="11">ಎಂಟನೆಯ ತಿಂಗಳಿನ ಎಂಟನೆಯವನು ಜೆರಹಿಯರಲ್ಲಿ ಒಬ್ಬನಾಗಿರುವ ಹುಷಾತ್ಯನಾದ ಸಿಬ್ಬೆಕೈ; ಅವನ ವರ್ಗದಲ್ಲಿ 24,000 ಜನರು.</verse>
				<verse number="12">ಒಂಬತ್ತನೆಯ ತಿಂಗಳಿನ ಒಂಬತ್ತನೆಯವನು ಬೆನ್ಯಾಮೀನ್ಯರಲ್ಲಿ ಒಬ್ಬನಾಗಿರುವ ಅನಾತೋತ್ಯನಾದ ಅಬೀಯೆಜೆರನು; ಅವನ ವರ್ಗದಲ್ಲಿ 24,000 ಜನರು.</verse>
				<verse number="13">ಹತ್ತನೆಯ ತಿಂಗಳಿನ ಹತ್ತನೆಯವನು ಜೆರಹಿಯರಲ್ಲಿ ಒಬ್ಬನಾಗಿರುವ ನೆಟೋಫದವನಾದ ಮಹರೈಯು ಅವನ ವರ್ಗದಲ್ಲಿ 24,000 ಜನರು.</verse>
				<verse number="14">ಹನ್ನೊಂದನೆಯ ತಿಂಗಳಿನ ಹನ್ನೊಂದನೆಯವನು ಎಫ್ರಾಯೀಮನ ಮಕ್ಕಳಲ್ಲಿ ಒಬ್ಬನಾಗಿರುವ ಪಿರಾತೋನ್ಯನಾದ ಬೆನಾಯನು; ಅವನ ವರ್ಗದಲ್ಲಿ 24,000 ಜನರು.</verse>
				<verse number="15">ಹನ್ನೆರಡನೆಯ ತಿಂಗಳಿನ ಹನ್ನೆರಡನೆಯವನು ಒತ್ನಿಯೇಲನ ಮಕ್ಕಳಲ್ಲಿ ಒಬ್ಬನಾಗಿರುವ ನೆಟೋಫದವನಾದ ಹೆಲ್ದಾಯಿಯು; ಅವನ ವರ್ಗದಲ್ಲಿ 24,000 ಜನರು.</verse>
				<verse number="16">ಇಸ್ರಾಯೇಲಿನ ಗೋತ್ರಗಳ ಮೇಲೆ ಇರುವ ಅಧಿಕಾರಿಗಳು ಯಾರೆಂದರೆ: ರೂಬೇನ್ಯರ ಮೇಲೆ ನಾಯಕನು, ಜಿಕ್ರಿಯ ಮಗ ಎಲೀಯೆಜೆರನು. ಸಿಮೆಯೋನ್ಯರ ಮೇಲೆ ನಾಯಕನು, ಮಾಕನ ಮಗ ಶೆಫಟ್ಯನು.</verse>
				<verse number="17">ಲೇವಿಯರ ಮೇಲೆ ಕೆಮುವೇಲನ ಮಗ ಹಷಬ್ಯನು. ಆರೋನ್ಯರ ಮೇಲೆ ಚಾದೋಕನು.</verse>
				<verse number="18">ಯೆಹೂದನಿಗೆ ದಾವೀದನ ಸಹೋದರರಲ್ಲಿ ಒಬ್ಬನಾಗಿರುವ ಎಲೀಹುವು; ಇಸ್ಸಾಕಾರನಿಗೆ ಮೀಕಾಯೇಲನ ಮಗ ಒಮ್ರಿಯು.</verse>
				<verse number="19">ಜೆಬುಲೂನನಿಗೆ ಓಬದ್ಯನ ಮಗ ಇಷ್ಮಾಯನು ನಫ್ತಾಲಿಯ ಗೋತ್ರಕ್ಕೆ ಅಜ್ರಿಯೇಲನ ಮಗ ಯೆರೀಮೋತನು.</verse>
				<verse number="20">ಎಫ್ರಾಯೀಮನ ಮಕ್ಕಳಲ್ಲಿ ಅಜಜ್ಯನ ಮಗ ಹೋಶೇಯನು; ಮನಸ್ಸೆಯ ಅರ್ಧ ಗೋತ್ರಕ್ಕೆ ಪೆದಾಯನ ಮಗ ಯೋಯೇಲನು.</verse>
				<verse number="21">ಗಿಲ್ಯಾದಿನಲ್ಲಿರುವ ಮನಸ್ಸೆಯ ಅರ್ಧ ಗೋತ್ರಕ್ಕೆ ಜೆಕರ್ಯನ ಮಗ ಇದ್ದೋನು; ಬೆನ್ಯಾಮೀನನ ಗೋತ್ರಕ್ಕೆ ಅಬ್ನೇರನ ಮಗ ಯಾಸೀಯೇಲನು;</verse>
				<verse number="22">ದಾನನ ಗೋತ್ರಕ್ಕೆ ಯೆರೋಹಾಮನ ಮಗ ಅಜರಯೇಲ್. ಇವರೇ ಇಸ್ರಾಯೇಲಿನ ಗೋತ್ರಗಳ ಪ್ರಧಾನರು.</verse>
				<verse number="23">ದಾವೀದನು ಇಪ್ಪತ್ತು ವರ್ಷಗಳೊಳಗೆ ಇದ್ದವರ ಲೆಕ್ಕ ತೆಗೆದುಕೊಳ್ಳಲಿಲ್ಲ. ಏಕೆಂದರೆ, “ಇಸ್ರಾಯೇಲನನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಾಗಿ ಮಾಡುವೆನು,” ಎಂದು ಯೆಹೋವ ದೇವರು ಹೇಳಿದ್ದರು.</verse>
				<verse number="24">ಚೆರೂಯಳ ಮಗ ಯೋವಾಬನು ಎಣಿಸಲು ಆರಂಭಿಸಿದನು. ಆದರೆ ಇಸ್ರಾಯೇಲಿಗೆ ವಿರೋಧವಾಗಿ ದೇವರ ಕೋಪಾಗ್ನಿಯು ಬಂದದ್ದರಿಂದ, ಅವನು ಪೂರ್ತಿಗೊಳಿಸಲಿಲ್ಲ. ಆ ಲೆಕ್ಕವು ಅರಸನಾದ ದಾವೀದನ ಇತಿಹಾಸಗಳ ಪುಸ್ತಕದಲ್ಲಿ ಲಿಖಿತವಾಗಲಿಲ್ಲ.</verse>
				<verse number="25">ಅರಸನ ಬೊಕ್ಕಸಗಳ ಮೇಲೆ ಅದೀಯೇಲನ ಮಗ ಅಜ್ಮಾವೆತನು ಇದ್ದನು. ಹೊಲಗಳಲ್ಲಿಯೂ, ಪಟ್ಟಣಗಳಲ್ಲಿಯೂ, ಗ್ರಾಮಗಳಲ್ಲಿಯೂ, ಬುರುಜುಗಳ ಮೇಲೆಯೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗ ಯೋನಾತಾನನು ಇದ್ದನು.</verse>
				<verse number="26">ಹೊಲವನ್ನು ವ್ಯವಸಾಯ ಮಾಡುವ ಕೆಲಸದವರ ಮೇಲೆ ಕೆಲೂಬನ ಮಗ ಎಜ್ರಿಯು ಇದ್ದನು.</verse>
				<verse number="27">ರಾಮಾ ಊರಿನ ಶಿಮ್ಮೀ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳುತ್ತಿದ್ದನು. ದ್ರಾಕ್ಷಿ ತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಪ್ಮೀಯನಾದ ಜಬ್ದೀ ಜವಾಬ್ದಾರಿಯಾಗಿದ್ದನು.</verse>
				<verse number="28">ತಗ್ಗಿನಲ್ಲಿರುವ ಓಲಿವ್ ಮರಗಳ ಮೇಲೆಯೂ, ಅತ್ತಿಮರಗಳ ಮೇಲೆಯೂ ಗೆದೇರ್ಯನಾದ ಬಾಳ್ ಹಾನಾನನು ಇದ್ದನು. ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷನು ಜವಾಬ್ದಾರಿಯಾಗಿದ್ದನು.</verse>
				<verse number="29">ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಜವಾಬ್ದಾರಿಯಾಗಿದ್ದನು. ತಗ್ಗುಗಳಲ್ಲಿರುವ ದನಗಳ ಮೇಲೆ ಅಡ್ಲಾಯಿಯ ಮಗನಾದ ಶಾಫಾಟನು ಜವಾಬ್ದಾರಿಯಾಗಿದ್ದನು.</verse>
				<verse number="30">ಒಂಟೆಗಳ ಮೇಲೆ ಜವಾಬ್ದಾರಿಯಾಗಿದ್ದವನು ಇಷ್ಮಾಯೇಲನಾದ ಓಬೀಲ್. ಕತ್ತೆಗಳ ಮೇಲೆ ಜವಾಬ್ದಾರಿಯಾಗಿದ್ದವನು ಮೇರೊನೋತ್ಯನಾದ ಯೆಹ್ದೆಯ.</verse>
				<verse number="31">ಕುರಿ ಮಂದೆಗಳ ಮೇಲೆ ಜವಾಬ್ದಾರಿಯಾಗಿದ್ದವನು ಹಗ್ರೀಯನಾದ ಯಾಜೀಜ್. ಇವರೆಲ್ಲರು ಅರಸನಾದ ದಾವೀದನ ಸ್ವತ್ತಿನ ಮೇಲೆ ಪ್ರಧಾನರಾಗಿದ್ದರು.</verse>
				<verse number="32">ಇದಲ್ಲದೆ ದಾವೀದನ ಚಿಕ್ಕಪ್ಪನಾದ ಯೋನಾತಾನನು ಗ್ರಹಿಕೆಯು, ವಿವೇಕಿಯೂ ಆದ ಲೇಖಕನಾಗಿದ್ದನು. ಹಕ್ಮೋನಿಯ ಮಗನಾದ ಯೆಹೀಯೇಲ್ ಅರಸನ ಪುತ್ರರನ್ನು ನೋಡಿಕೊಳ್ಳುತ್ತಿದ್ದನು.</verse>
				<verse number="33">ಅರಸನ ಆಲೋಚನೆಗಾರನು ಅಹೀತೋಫೆಲ್; ಅರಸನ ಆಪ್ತ ಸ್ನೇಹಿತನು ಅರ್ಕಿಯನಾದ ಹೂಷೈ.</verse>
				<verse number="34">ಅಹೀತೋಫೆಲನ ತರುವಾಯ ಬೆನಾಯನ ಮಗನಾದ ಯೆಹೋಯಾದಾವನೂ, ಅಬಿಯಾತರನೂ ಅರಸನ ಆಲೋಚನೆಗಾರರಾಗಿದ್ದರು. ಯೋವಾಬನು ಅರಸನ ಸೈನ್ಯಾಧಿಪತಿಯಾಗಿದ್ದನು.</verse>
			</chapter>
			<chapter number="28">
				<verse number="1">ದಾವೀದನು ಇಸ್ರಾಯೇಲಿನ ಸಮಸ್ತ ಪ್ರಧಾನ ಗೋತ್ರಗಳ ಪ್ರಧಾನರನ್ನೂ, ವರ್ಗ ವರ್ಗವಾಗಿ ಅರಸನನ್ನು ಸೇವೆಮಾಡಿದ ಸಭೆಗಳ ಪ್ರಧಾನರನ್ನೂ, ಸಹಸ್ರಾಧಿಪತಿಗಳನ್ನೂ, ಶತಾಧಿಪತಿಗಳನ್ನೂ ಅರಸನ ಸ್ವತ್ತಿನ ಮೇಲೆಯೂ, ಅವನ ಪುತ್ರರ ಸ್ವತ್ತಿನ ಮೇಲೆಯೂ ಪಶುಗಳ ಮೇಲೆಯೂ ಇರುವ ಪ್ರಧಾನರನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಶೂರರನ್ನೂ ಯೆರೂಸಲೇಮಿನಲ್ಲಿ ಕೂಡಿ ಬರಲು ಕರೆಸಿದನು.</verse>
				<verse number="2">ಆಗ ಅರಸನಾದ ದಾವೀದನು ಎದ್ದು ನಿಂತು, “ನನ್ನ ಸಹೋದರರೇ, ನನ್ನ ಜನರೇ, ನನ್ನ ಮಾತು ಕೇಳಿರಿ. ಯೆಹೋವ ದೇವರ ಒಡಂಬಡಿಕೆಯ ಮಂಜೂಷದ ನಿಮಿತ್ತವಾಗಿಯೂ, ನಮ್ಮ ದೇವರ ಪಾದಪೀಠದ ನಿಮಿತ್ತವಾಗಿಯೂ ವಿಶ್ರಾಂತಿಗೆ ಆಲಯವನ್ನು ನಾನು ಕಟ್ಟಿಸಲು ಮನಸ್ಸು ಮಾಡಿ, ಅದಕ್ಕಾಗಿ ಎಲ್ಲವನ್ನೂ ಸಿದ್ಧಪಡಿಸಿದೆನು.</verse>
				<verse number="3">ಆಗ ದೇವರು ನನಗೆ, ‘ನೀನು ಮಹಾ ಯುದ್ಧಗಳನ್ನು ನಡೆಸಿ, ಬಹಳ ರಕ್ತವನ್ನು ಸುರಿಸಿದವನು; ನನ್ನ ಹೆಸರಿಗೆ ನೀನು ಆಲಯವನ್ನು ಕಟ್ಟಿಸಬಾರದು,’ ಎಂದು ಹೇಳಿದರು.</verse>
				<verse number="4">“ಆದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಎಂದೆಂದಿಗೂ ಇಸ್ರಾಯೇಲಿನ ಮೇಲೆ ಅರಸನಾಗಿರಲು ನನ್ನ ತಂದೆಯ ಮನೆಯ ಸಮಸ್ತರೊಳಗಿಂದ ನನ್ನನ್ನು ಆರಿಸಿಕೊಂಡರು. ಏಕೆಂದರೆ ಅವನು ನಾಯಕನಾಗಿರಲು ಯೆಹೂದ ಗೋತ್ರವನ್ನೂ, ಯೆಹೂದ ಗೋತ್ರದಿಂದ ನನ್ನ ಕುಟುಂಬವನ್ನೂ ಆದುಕೊಂಡು, ನನ್ನ ತಂದೆಯ ಪುತ್ರರಲ್ಲಿ ನನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಮಾಡಲು ಚಿತ್ತವುಳ್ಳವರಾಗಿದ್ದರು.</verse>
				<verse number="5">ಯೆಹೋವ ದೇವರು ನನಗೆ ಅನೇಕ ಪುತ್ರರನ್ನು ಕೊಟ್ಟಿರುವಾಗ, ನನ್ನ ಸಮಸ್ತ ಪುತ್ರರಲ್ಲಿ ಇಸ್ರಾಯೇಲಿನ ಮೇಲಿಗಾಗಿ, ಯೆಹೋವ ದೇವರ ರಾಜ್ಯದ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದಕ್ಕೆ ನನ್ನ ಮಗ ಸೊಲೊಮೋನನನ್ನು ಆದುಕೊಂಡರು.</verse>
				<verse number="6">ಇದಲ್ಲದೆ ದೇವರು ನನಗೆ, ‘ನಿನ್ನ ಮಗ ಸೊಲೊಮೋನನು ತಾನೇ ನನ್ನ ಆಲಯವನ್ನೂ, ನನ್ನ ಅಂಗಳಗಳನ್ನೂ ಕಟ್ಟಿಸುವನು. ಏಕೆಂದರೆ ಅವನನ್ನು ನನಗೆ ಮಗನಾಗಿರಲು ಆಯ್ದುಕೊಂಡೆನು. ನಾನು ಅವನಿಗೆ ತಂದೆಯಾಗಿರುವೆನು.</verse>
				<verse number="7">ಈ ಹೊತ್ತಿನ ಹಾಗೆ ನನ್ನ ಆಜ್ಞೆಗಳನ್ನೂ, ನನ್ನ ನ್ಯಾಯಗಳನ್ನೂ ಅವನು ನಡೆಸಲು ದೃಢನಾಗಿದ್ದರೆ, ಅವನ ರಾಜ್ಯವನ್ನು ಯುಗಯುಗಾಂತರಕ್ಕೂ ಸ್ಥಿರಪಡಿಸುವೆನು,’ ಎಂದರು.</verse>
				<verse number="8">“ಆದ್ದರಿಂದ ನೀವು ಈ ಉತ್ತಮ ದೇಶವನ್ನು ಸ್ವಾಧೀನಮಾಡಿಕೊಂಡು, ಅದನ್ನು ನಿರಂತರದಲ್ಲಿ ನಿಮ್ಮ ತರುವಾಯ ಇರುವ ನಿಮ್ಮ ಮಕ್ಕಳಿಗೆ ಬಾಧ್ಯತೆಯಾಗಿ ಕೊಡುವ ಹಾಗೆ, ಯೆಹೋವ ದೇವರ ಸಭೆಯಾದ ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿಯೂ, ನಮ್ಮ ದೇವರು ಕೇಳಿಸುವಂತೆ ನಿಮ್ಮ ದೇವರಾದ ಯೆಹೋವ ದೇವರ ಆಜ್ಞೆಗಳನ್ನೆಲ್ಲಾ ಹುಡುಕಿ ಕೈಗೊಳ್ಳಿರಿ ಎಂದು ಎಚ್ಚರಿಸುತ್ತೇನೆ.</verse>
				<verse number="9">“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.</verse>
				<verse number="10">ಆದ್ದರಿಂದ ಜಾಗ್ರತೆಯಾಗಿರು. ಏಕೆಂದರೆ, ಯೆಹೋವ ದೇವರು ಪರಿಶುದ್ಧ ಆಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ. ನೀನು ಧೈರ್ಯದಿಂದ ಕೆಲಸಕ್ಕೆ ಕೈ ಹಚ್ಚು,” ಎಂದನು.</verse>
				<verse number="11">ಆಗ ದಾವೀದನು ತನ್ನ ಮಗ ಸೊಲೊಮೋನನಿಗೆ, “ದ್ವಾರಾಂಗಳದ ಮಾದರಿಯನ್ನೂ, ಅದರ ಮನೆಗಳು, ಅದರ ಉಗ್ರಾಣಗಳು, ಅದರ ಮೇಲಿನ ಕೊಠಡಿಗಳು, ಅದರ ಅಂತರಂಗದ ಕೊಠಡಿಗಳು, ಕರುಣಾಸನದ ಸ್ಥಾನವು,</verse>
				<verse number="12">ಯೆಹೋವ ದೇವರ ಮನೆಯ ಅಂಗಳಗಳು, ಸುತ್ತಲಿರುವ ಕೊಠಡಿಗಳಾದ ಯೆಹೋವ ದೇವರ ಮನೆಯ ಉಗ್ರಾಣಗಳು, ಪ್ರತಿಷ್ಠೆ ಮಾಡಿದವುಗಳ ಉಗ್ರಾಣಗಳು, ಆತ್ಮದಿಂದ ತನಗುಂಟಾದ ಇವುಗಳ ಸಮಸ್ತ ಮಾದರಿಯನ್ನೂ ಕೊಟ್ಟನು.</verse>
				<verse number="13">ಇದಲ್ಲದೆ ಯಾಜಕರ, ಲೇವಿಯರ ವರ್ಗಗಳಿಗೋಸ್ಕರವೂ, ಯೆಹೋವ ದೇವರ ಮನೆಯ ಸೇವೆಯ ಸಮಸ್ತ ಕೆಲಸಕ್ಕೋಸ್ಕರವೂ ಯೆಹೋವ ದೇವರ ಮನೆಯಲ್ಲಿರುವ ಸೇವೆ ಮಾಡುವ ಸಮಸ್ತ ಪಾತ್ರೆಗಳಿಗೋಸ್ಕರವೂ ಸೂಚನೆಗಳನ್ನು ಕೊಟ್ಟನು.</verse>
				<verse number="14">ಸಕಲ ವಿಧವಾದ ಸೇವೆಗೆ ಸಮಸ್ತ ಬಂಗಾರದ ಸಲಕರಣೆಗಳಿಗೋಸ್ಕರ ಬಂಗಾರವನ್ನೂ, ಸಕಲ ವಿಧವಾದ ಸೇವೆಗೆ ಸಮಸ್ತ ಬೆಳ್ಳಿಯ ಸಾಮಾನುಗಳಿಗೋಸ್ಕರ ಬೆಳ್ಳಿಯನ್ನೂ ತೂಗಿಕೊಟ್ಟನು.</verse>
				<verse number="15">ಹೇಗೆಂದರೆ, ಬಂಗಾರದ ದೀಪಸ್ತಂಭಗಳಿಗೋಸ್ಕರವೂ, ಅದರ ಬಂಗಾರದ ದೀಪಗಳಿಗೋಸ್ಕರವೂ ಒಂದೊಂದು ಸ್ತಂಭಕ್ಕೋಸ್ಕರ ತೂಕವಾಗಿ ತೂಗಿಕೊಟ್ಟನು. ಬೆಳ್ಳಿಯ ದೀಪಸ್ತಂಭಗಳಿಗೋಸ್ಕರ ದೀಪಸ್ತಂಭಕ್ಕೂ, ಅದರ ದೀಪಗಳಿಗೂ ಒಂದೊಂದು ದೀಪಸ್ತಂಭದ ಕೆಲಸದ ಪ್ರಕಾರ ಅಳತೆಮಾಡಿ ತೂಗಿಕೊಟ್ಟನು.</verse>
				<verse number="16">ಆ ಪ್ರಕಾರವೇ ಸಮ್ಮುಖದ ರೊಟ್ಟಿಗಳ ಮೇಜುಗಳಿಗೋಸ್ಕರ ಒಂದೊಂದು ಮೇಜಿಗೆ ತೂಗಿಕೊಟ್ಟನು. ಬೆಳ್ಳಿಯ ಮೇಜುಗಳಿಗೋಸ್ಕರ ಬೆಳ್ಳಿಯನ್ನು ತೂಗಿಕೊಟ್ಟನು.</verse>
				<verse number="17">ಅದೇ ಪ್ರಕಾರ ಮುಳ್ಳುಗಳೂ, ಪಾತ್ರೆಗಳೂ, ಹೂಜೆಗಳೂ ಇವುಗಳಿಗೋಸ್ಕರ ಚೊಕ್ಕ ಬಂಗಾರವನ್ನು ಕೊಟ್ಟನು. ಬಂಗಾರದ ಬಟ್ಟಲುಗಳಿಗೋಸ್ಕರ, ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ; ಬೆಳ್ಳಿಯ ಒಂದೊಂದು ಬಟ್ಟಲಿಗೋಸ್ಕರ ಅದರ ತೂಕವಾಗಿಯೂ ಕೊಟ್ಟನು.</verse>
				<verse number="18">ಇದಲ್ಲದೆ ಧೂಪಪೀಠಕ್ಕೋಸ್ಕರ ಬಂಗಾರವನ್ನೂ, ರೆಕ್ಕೆಗಳನ್ನೂ ಚಾಚಿಕೊಂಡು ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಮುಚ್ಚುವ ಕೆರೂಬಿಗಳ ರಥದ ಮಾದರಿಗೋಸ್ಕರ ಬಂಗಾರವನ್ನೂ ತೂಗಿಕೊಟ್ಟನು.</verse>
				<verse number="19">“ಯೆಹೋವ ದೇವರು ತಮ್ಮ ಕೈಯನ್ನು ನನ್ನ ಮೇಲೆ ಇರಿಸಿ, ಈ ಯೋಜನೆಯ ಕೆಲಸಗಳನ್ನೆಲ್ಲಾ ನನಗೆ ತಿಳಿಯುವಂತೆ ಮಾಡಿದರು,” ಎಂದರು.</verse>
				<verse number="20">ದಾವೀದನು ತನ್ನ ಮಗ ಸೊಲೊಮೋನನಿಗೆ, “ನೀನು ಬಲಗೊಂಡು, ಧೈರ್ಯದಿಂದ ಮಾಡು; ಭಯಪಡಬೇಡ, ನಿರಾಶನಾಗಬೇಡ. ಏಕೆಂದರೆ ನನ್ನ ದೇವರಾಗಿರುವ ಯೆಹೋವ ದೇವರು ನಿನ್ನ ಸಂಗಡ ಇರುತ್ತಾರೆ. ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನೆಲ್ಲಾ ನೀನು ತೀರಿಸುವವರೆಗೂ, ಅವರು ನಿನ್ನನ್ನು ತೊರೆಯುವುದಿಲ್ಲ, ಕೈಬಿಡುವುದಿಲ್ಲ.</verse>
				<verse number="21">ಇಗೋ, ಯೆಹೋವ ದೇವರ ಆಲಯದ ಸಮಸ್ತ ಸೇವೆಗೋಸ್ಕರ ಯಾಜಕರ ಲೇವಿಯರ ವರ್ಗಗಳುಂಟು. ಎಲ್ಲಾ ಕೆಲಸಕ್ಕೂ, ಎಲ್ಲಾ ವಿಧವಾದ ಸೇವೆಗೂ, ಸಿದ್ಧ ಮನಸ್ಸುಳ್ಳಂಥ ಜಾಣತನದಿಂದ ಕೆಲಸ ಮಾಡುವವರು ನಿನ್ನ ಸಂಗಡ ಇದ್ದಾರೆ. ಇದಲ್ಲದೆ ಪ್ರಧಾನರೂ, ಸಕಲ ಜನರೂ ನಿನ್ನ ಮಾತುಗಳಿಗೆಲ್ಲಾ ವಿಧೇಯರಾಗಿರುವರು.”</verse>
			</chapter>
			<chapter number="29">
				<verse number="1">ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನೆಂದರೆ, “ದೇವರು ಒಬ್ಬನನ್ನೇ ಆಯ್ದುಕೊಂಡ ನನ್ನ ಮಗ ಸೊಲೊಮೋನನು ಚಿಕ್ಕವನೂ ಎಳೆಯ ಪ್ರಾಯದವನೂ ಆಗಿದ್ದಾನೆ. ಆದರೆ ಕೆಲಸವು ದೊಡ್ಡದು. ಈ ಮಹಾ ಕಟ್ಟಡವು ಮನುಷ್ಯರಿಗೋಸ್ಕರವಲ್ಲ, ದೇವರಾದ ಯೆಹೋವ ದೇವರಿಗೋಸ್ಕರವೇ,</verse>
				<verse number="2">ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ, ಬಂಗಾರದ ಕೆಲಸಕ್ಕೋಸ್ಕರ ಬಂಗಾರವನ್ನೂ, ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ, ಕಂಚಿನ ಕೆಲಸಕ್ಕೋಸ್ಕರ ಕಂಚನ್ನೂ, ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ, ಮರದ ಕೆಲಸಕ್ಕೋಸ್ಕರ ಮರವನ್ನೂ, ಗೋಮೇಧಿಕ ರತ್ನಗಳನ್ನೂ; ಕೆತ್ತುವುದಕ್ಕೆ ರತ್ನ ವಿಚಿತ್ರವಾದಂಥ ಕಲ್ಲುಗಳನ್ನೂ; ಸಕಲ ಅಮೂಲ್ಯವಾದ ಕಲ್ಲುಗಳನ್ನೂ. ಅಮೃತ ಶಿಲೆಗಳನ್ನೂ ಬಹಳಷ್ಟು ಸಿದ್ಧಮಾಡಿದ್ದೇನೆ.</verse>
				<verse number="3">ಇದಲ್ಲದೆ ನಾನು ನನ್ನ ದೇವರ ಮನೆಯ ಮೇಲೆ ನನಗೆ ಭಕ್ತಿ ಇರುವುದರಿಂದ, ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು, ನನ್ನ ಸ್ವಂತ ಸ್ವತ್ತಿನಿಂದ ಬಂಗಾರವನ್ನೂ, ಬೆಳ್ಳಿಯನ್ನೂ ನನ್ನ ಪವಿತ್ರ ದೇವರ ಮನೆಗೆ ಕೊಟ್ಟಿದ್ದೇನೆ.</verse>
				<verse number="4">ಮನೆಗಳ ಗೋಡೆಗಳನ್ನು ಹೊದಿಸುವುದಕ್ಕೆ ಓಫೀರ್ ಬಂಗಾರದಲ್ಲಿ 100 ಮೆಟ್ರಿಕ್ ಟನ್ ಬಂಗಾರವನ್ನೂ, 240 ಮೆಟ್ರಿಕ್ ಟನ್ ಚೊಕ್ಕ ಬೆಳ್ಳಿಯನ್ನೂ ಕೊಟ್ಟಿದ್ದೇನೆ.</verse>
				<verse number="5">ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿಬಂಗಾರದ ಸಾಮಾನುಗಳನ್ನು ಮಾಡಿಸಬೇಕು. ಈ ದಿನ ತನ್ನನ್ನೇ ಯೆಹೋವ ದೇವರಿಗೆ ಇಷ್ಟಪೂರ್ವಕವಾಗಿ ಸಮರ್ಪಿಸಿಕೊಳ್ಳುವವರು ಯಾರು?” ಎಂದನು.</verse>
				<verse number="6">ಆಗ ಪಿತೃಗಳ ಪ್ರಧಾನರೂ, ಇಸ್ರಾಯೇಲ್ ಗೋತ್ರಗಳ ಪ್ರಧಾನರೂ, ಸಹಸ್ರಾಧಿಪತಿಗಳೂ ಶತಾಧಿಪತಿಗಳೂ, ಅರಸನ ಕೆಲಸದ ಯಜಮಾನರೂ ಇಷ್ಟಪೂರ್ವಕವಾಗಿ ಕಾಣಿಕೆಗಳನ್ನು ತಂದು,</verse>
				<verse number="7">ಯೆಹೋವ ದೇವರ ಮನೆಯ ಸೇವೆಗೋಸ್ಕರ ಬಂಗಾರವನ್ನೂ 17 0 ಮೆಟ್ರಿಕ್ ಟನ್, ಮತ್ತು 10,000 ಬಂಗಾರದ ನಾಣ್ಯಗಳನ್ನೂ 34 5 ಮೆಟ್ರಿಕ್ ಟನ್ ಬೆಳ್ಳಿಯನ್ನೂ, 61 0 ಮೆಟ್ರಿಕ್ ಟನ್ ಕಂಚನ್ನೂ, 34 50 ಮೆಟ್ರಿಕ್ ಟನ್ ಕಬ್ಬಿಣವನ್ನೂ ಕೊಟ್ಟರು.</verse>
				<verse number="8">ಇದಲ್ಲದೆ ಯಾರ ಬಳಿಯಲ್ಲಿ ಅಮೂಲ್ಯ ರತ್ನಗಳು ಇದ್ದವೋ, ಅವರು ಗೇರ್ಷೋನ್ಯನಾದ ಯೆಹೀಯೇಲನ ಕೈಯಿಂದ ಅವುಗಳನ್ನು ಯೆಹೋವ ದೇವರ ಆಲಯದ ಬೊಕ್ಕಸಕ್ಕೆ ಕೊಟ್ಟರು.</verse>
				<verse number="9">ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ, ಜನರು ಸಂತೋಷಪಟ್ಟರು. ಏಕೆಂದರೆ ಅವರು ಪೂರ್ಣಮನಸ್ಸಿನಿಂದ ಮನಃಪೂರ್ವಕವಾಗಿ ಯೆಹೋವ ದೇವರಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷಪಟ್ಟನು.</verse>
				<verse number="10">ದಾವೀದನು ಸಮಸ್ತ ಕೂಟದ ಮುಂದೆ ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ನಮ್ಮ ತಂದೆಯಾದ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವು ಯುಗಯುಗಾಂತರಗಳಿಂದ ಯುಗಯುಗಾಂತರಗಳಿಗೂ ಸ್ತುತಿಗೆ ಪಾತ್ರರಾಗಿದ್ದೀರಿ.</verse>
				<verse number="11">ಯೆಹೋವ ದೇವರೇ, ಮಹತ್ವವೂ, ಪರಾಕ್ರಮವೂ, ಮಹಿಮೆಯೂ, ಜಯವೂ, ವೈಭವವೂ ನಿಮ್ಮವೇ. ಆಕಾಶಗಳಲ್ಲಿಯೂ, ಭೂಮಿಯಲ್ಲಿಯೂ ಇರುವುದೆಲ್ಲಾ ನಿಮ್ಮದೇ. ಯೆಹೋವ ದೇವರೇ, ರಾಜ್ಯವು ನಿಮ್ಮದು. ನೀವು ಸಮಸ್ತಕ್ಕೂ ತಲೆಯಾಗಿ ಉನ್ನತರು.</verse>
				<verse number="12">ಐಶ್ವರ್ಯವೂ, ಘನವೂ ನಿಮ್ಮ ಬಳಿಯಿಂದ ಬರುತ್ತವೆ. ನೀವು ಸಮಸ್ತವನ್ನು ಆಳಿಕೆಮಾಡುವವರು. ಶಕ್ತಿಯೂ, ಪರಾಕ್ರಮವೂ ನಿಮ್ಮ ಕೈಯಲ್ಲಿ ಇವೆ. ಎಲ್ಲರಿಗೂ ಉನ್ನತಿಯನ್ನೂ, ಬಲವನ್ನೂ ಕೊಡುವುದು ನಿಮ್ಮ ಕೈಯಲ್ಲಿ ಇದೆ.</verse>
				<verse number="13">ಆದ್ದರಿಂದ ನಮ್ಮ ದೇವರೇ, ನಾವು ನಿಮ್ಮನ್ನು ಸ್ತುತಿಸಿ, ನಿಮ್ಮ ಮಹಿಮೆಯುಳ್ಳ ನಾಮವನ್ನು ಕೊಂಡಾಡುತ್ತೇವೆ.</verse>
				<verse number="14">“ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವುದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಏಕೆಂದರೆ ಸಮಸ್ತವೂ ನಿಮ್ಮಿಂದಲೇ.</verse>
				<verse number="15">ನಿಮ್ಮ ಕೈಯಿಂದಲೇ ನಿಮಗೆ ಅರ್ಪಿಸಿದೆವು. ಏಕೆಂದರೆ ನಾವು ನಿಮ್ಮ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ, ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಇವೆ; ನಿರೀಕ್ಷೆಯು ಇಲ್ಲ.</verse>
				<verse number="16">ನಮ್ಮ ದೇವರಾದ ಯೆಹೋವ ದೇವರೇ, ನಿಮ್ಮ ಪರಿಶುದ್ಧ ನಾಮಕ್ಕೋಸ್ಕರ ನಿಮಗೆ ಆಲಯವನ್ನು ಕಟ್ಟಿಸಲು ನಾವು ಸಿದ್ಧಮಾಡಿದ ಈ ರಾಶಿಯೆಲ್ಲಾ ನಿಮ್ಮಿಂದ ಬಂದದ್ದು. ಸಮಸ್ತವೂ ನಿಮ್ಮದು.</verse>
				<verse number="17">ನನ್ನ ದೇವರೇ, ನೀವು ಹೃದಯವನ್ನು ಪರಿಶೋಧಿಸಿ ಯಥಾರ್ಥತೆಯಲ್ಲಿ ಸಂತೋಷವಾಗಿದ್ದೀರಿ, ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಇಷ್ಟಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿರುವ ನಿಮ್ಮ ಜನರು ನಿಮಗೆ ಇಷ್ಟಪೂರ್ವಕವಾಗಿ ಅರ್ಪಿಸುವುದನ್ನು ಈಗ ಕಂಡು ಸಂತೋಷಿಸಿದೆನು.</verse>
				<verse number="18">ನಮ್ಮ ಪಿತೃಗಳಾದ ಅಬ್ರಹಾಮನ, ಇಸಾಕನ, ಇಸ್ರಾಯೇಲನ ದೇವರಾದ ಯೆಹೋವ ದೇವರೇ, ನಿಮ್ಮ ಜನರ ಹೃದಯದ ಮನೋಭಾವನೆಯಲ್ಲಿ ಭಕ್ತಿಯನ್ನು ನಿರಂತರವಾಗಿ ಕಾಪಾಡಿ, ಅವರ ಹೃದಯವನ್ನು ನಿಮಗೆ ಸಿದ್ಧಮಾಡಿ.</verse>
				<verse number="19">ಇದಲ್ಲದೆ ನಿಮ್ಮ ಆಜ್ಞೆಗಳನ್ನೂ, ನಿಮ್ಮ ಸಾಕ್ಷಿಗಳನ್ನೂ, ನಿಮ್ಮ ಕಟ್ಟಳೆಗಳನ್ನೂ ಕೈಗೊಳ್ಳಲೂ, ಸಮಸ್ತವನ್ನು ಮಾಡಲೂ ನಾನು ಯಾವುದಕ್ಕೋಸ್ಕರ ಸಿದ್ಧ ಮಾಡಿದೆನೋ, ಆ ಮಹಾ ಕಟ್ಟಡವನ್ನು ಕಟ್ಟಿಸಲೂ, ನನ್ನ ಮಗನಾದ ಸೊಲೊಮೋನನಿಗೆ ಪೂರ್ಣ ಹೃದಯವನ್ನು ಕೊಡಿರಿ,” ಎಂದನು.</verse>
				<verse number="20">ತರುವಾಯ ದಾವೀದನು ಸಮಸ್ತ ಸಭೆಗೆ, “ಈಗ ನಿಮ್ಮ ದೇವರಾದ ಯೆಹೋವ ದೇವರನ್ನು ಸ್ತುತಿಸಿರಿ,” ಎಂದನು. ಆಗ ಜನರೆಲ್ಲರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ತಮ್ಮ ತಲೆಗಳನ್ನು ಬಾಗಿಸಿ ಯೆಹೋವ ದೇವರನ್ನೂ, ಅರಸನನ್ನೂ ವಂದಿಸಿದರು.</verse>
				<verse number="21">ಮಾರನೆಯ ದಿವಸದಲ್ಲಿ ಅವರು ಯೆಹೋವ ದೇವರಿಗೆ ಬಲಿಗಳನ್ನು ವಧಿಸಿ, ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ, ಸಾವಿರ ಟಗರುಗಳನ್ನೂ, ಸಾವಿರ ಕುರಿಮರಿಗಳನ್ನೂ, ಅವುಗಳ ಪಾನದ ಅರ್ಪಣೆಗಳನ್ನೂ, ಸಮಸ್ತ ಇಸ್ರಾಯೇಲರಿಗೋಸ್ಕರ ಬಹಳವಾಗಿ ಬಲಿಗಳನ್ನು ಅರ್ಪಿಸಿದರು.</verse>
				<verse number="22">ಆ ದಿವಸದಲ್ಲಿ ಮಹಾ ಸಂತೋಷದಿಂದ ಯೆಹೋವ ದೇವರ ಮುಂದೆ ತಿಂದು ಕುಡಿದರು. ಎರಡನೆಯ ಸಾರಿ ದಾವೀದನ ಮಗ ಸೊಲೊಮೋನನನ್ನು ಅರಸನನ್ನಾಗಿ ಸ್ವೀಕರಿಸಿದರು. ಯೆಹೋವ ದೇವರ ಮುಂದೆ ಅವನನ್ನು ನಾಯಕನಾಗಿಯೂ ಚಾದೋಕನನ್ನು ಯಾಜಕನಾಗಿಯೂ ಅಭಿಷೇಕಿಸಿದರು.</verse>
				<verse number="23">ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನಿಗೆ ಬದಲಾಗಿ ಅರಸನಾಗಿ, ಯೆಹೋವ ದೇವರ ಸಿಂಹಾಸನದ ಮೇಲೆ ಕುಳಿತುಕೊಂಡು, ಸಮೃದ್ಧಿ ಹೊಂದಿದನು. ಸಮಸ್ತ ಇಸ್ರಾಯೇಲರು ಅವನಿಗೆ ವಿಧೇಯರಾದರು.</verse>
				<verse number="24">ಎಲ್ಲಾ ಪ್ರಧಾನರೂ, ಪರಾಕ್ರಮಶಾಲಿಗಳೂ, ಅರಸನಾದ ದಾವೀದನ ಸಮಸ್ತ ಪುತ್ರರೂ ಅರಸನಾದ ಸೊಲೊಮೋನನಿಗೆ ಅಧೀನರಾದರು.</verse>
				<verse number="25">ಇದಲ್ಲದೆ ಯೆಹೋವ ದೇವರು ಸಮಸ್ತ ಇಸ್ರಾಯೇಲಿನ ಸಮ್ಮುಖದಲ್ಲಿ ಸೊಲೊಮೋನನನ್ನು ಅಧಿಕವಾಗಿ ಹೆಚ್ಚಿಸಿ, ಇಸ್ರಾಯೇಲಿನಲ್ಲಿ ಅವನಿಗಿಂತ ಮುಂಚೆ ಇದ್ದ ಯಾವ ಅರಸನಿಗಾದರೂ ಇಲ್ಲದಂಥ ರಾಜ್ಯದ ವೈಭವವನ್ನು ಅವನಿಗೆ ಕೊಟ್ಟರು.</verse>
				<verse number="26">ಇಷಯನ ಮಗ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳಿದನು.</verse>
				<verse number="27">ಅವನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರ್ಷಗಳು. ಏಳು ವರ್ಷ ಹೆಬ್ರೋನಿನಲ್ಲಿ ಆಳಿದನು. ಮೂವತ್ತಮೂರು ವರ್ಷ ಯೆರೂಸಲೇಮಿನಲ್ಲಿ ಆಳಿದನು.</verse>
				<verse number="28">ಅವನು ದೀರ್ಘಾಯುಷ್ಯದಿಂದಲೂ, ಐಶ್ವರ್ಯದಿಂದಲೂ, ಘನದಿಂದಲೂ ಕೂಡಿದವನಾಗಿ, ಒಳ್ಳೆಯ ಪ್ರಾಯದಲ್ಲಿ ಮರಣಹೊಂದಿದನು. ಅವನ ಮಗ ಸೊಲೊಮೋನನು ಅವನಿಗೆ ಬದಲಾಗಿ ಅರಸನಾದನು.</verse>
				<verse number="29">ಅರಸನಾದ ದಾವೀದನ ಕ್ರಿಯೆಗಳು ಮೊದಲಿನಿಂದ ಕೊನೆಯವರೆಗೆ ಅವನ ಸಮಸ್ತ ಆಳಿಕೆಯೂ, ಅವನ ಪರಾಕ್ರಮವೂ, ಅವನ ಮೇಲೆಯೂ, ಇಸ್ರಾಯೇಲಿನ ಮೇಲೆಯೂ, ಬೇರೆ ದೇಶಗಳ ಸಮಸ್ತ ರಾಜ್ಯಗಳ ಮೇಲೆಯೂ ಸಂಭವಿಸಿದ ಘಟನೆಗಳು,</verse>
				<verse number="30">ದರ್ಶಿಯಾದ ಸಮುಯೇಲನ ಪುಸ್ತಕದಲ್ಲಿ, ಪ್ರವಾದಿಯಾದ ನಾತಾನನ ಪುಸ್ತಕದಲ್ಲಿ ಮತ್ತು ದರ್ಶಿಯಾದ ಗಾದನ ಪುಸ್ತಕದಲ್ಲಿಯೂ ಲಿಖಿತವಾಗಿವೆ.</verse>
			</chapter>
		</book>
		<book number="14">
			<chapter number="1">
				<verse number="1">ದಾವೀದನ ಮಗ ಸೊಲೊಮೋನನು ತನ್ನ ರಾಜ್ಯದಲ್ಲಿ ಬಲಗೊಂಡನು ಮತ್ತು ಅವನ ದೇವರಾದ ಯೆಹೋವ ದೇವರು ಅವನ ಸಂಗಡ ಇದ್ದು, ಅವನನ್ನು ಉನ್ನತನನ್ನಾಗಿ ಮಾಡಿದರು.</verse>
				<verse number="2">ಆಗ ಸೊಲೊಮೋನನು ಸಮಸ್ತ ಇಸ್ರಾಯೇಲರ ಶತಾಧಿಪತಿಗಳೊಂದಿಗೂ, ಸಹಸ್ರಾಧಿಪತಿಗಳೊಂದಿಗೂ, ನ್ಯಾಯಾಧಿಪತಿಗಳೊಂದಿಗೂ, ಪ್ರಧಾನರಾದವರೊಂದಿಗೂ, ಸಮಸ್ತ ಇಸ್ರಾಯೇಲರ ಪಿತೃಗಳ ಶ್ರೇಷ್ಠರಾದ ಸಮಸ್ತ ಪ್ರಭುಗಳೊಂದಿಗೂ ಮಾತನಾಡಿದನು.</verse>
				<verse number="3">ಹೀಗೆ ಅವನೂ, ಅವನ ಸಂಗಡ ಸಮಸ್ತ ಸಮೂಹವೂ ಗಿಬ್ಯೋನಿನಲ್ಲಿರುವ ಉನ್ನತ ಸ್ಥಳಕ್ಕೆ ಹೋದರು. ಯೆಹೋವ ದೇವರ ಸೇವಕನಾದ ಮೋಶೆಯು ಮರುಭೂಮಿಯಲ್ಲಿ ಮಾಡಿದ ದೇವದರ್ಶನ ಗುಡಾರವು ಅಲ್ಲಿತ್ತು.</verse>
				<verse number="4">ಆದರೆ ದಾವೀದನು ಯೆಹೋವ ದೇವರ ಮಂಜೂಷವನ್ನು ಕಿರ್ಯತ್ ಯಾರೀಮಿನಿಂದ ತಾನು ಅದಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಗುಡಾರವನ್ನು ಹಾಕಿಸಿದ್ದನು.</verse>
				<verse number="5">ಆದರೆ ಊರಿಯನ ಮಗ, ಹೂರನ ಮೊಮ್ಮಗನಾದ ಬೆಚಲಯೇಲನು ಮಾಡಿದ ಕಂಚಿನ ಬಲಿಪೀಠವು ಗಿಬ್ಯೋನಿನಲ್ಲಿ ಯೆಹೋವ ದೇವರ ಗುಡಾರದ ಮುಂದೆ ಇತ್ತು. ಅಲ್ಲಿ ಸೊಲೊಮೋನನೂ, ಸಭೆಯೂ ದೇವರ ಇಚ್ಛೆಯನ್ನು ವಿಚಾರಿಸಿದರು.</verse>
				<verse number="6">ಆಗ ಸೊಲೊಮೋನನು ಸಭೆಯ ಗುಡಾರದ ಬಳಿಯಲ್ಲಿ ಯೆಹೋವ ದೇವರ ಮುಂದೆ ಇರುವ ಕಂಚಿನ ಪೀಠದ ಬಳಿಗೆ ಹೋಗಿ, ಅದರ ಮೇಲೆ ಸಹಸ್ರ ದಹನಬಲಿಗಳನ್ನು ಅರ್ಪಿಸಿದನು.</verse>
				<verse number="7">ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು ಅವನಿಗೆ, “ನಾನು ನಿನಗೆ ಏನು ವರ ಕೊಡಬೇಕು? ಕೇಳಿಕೋ,” ಎಂದರು.</verse>
				<verse number="8">ಅದಕ್ಕೆ ಸೊಲೊಮೋನನು ದೇವರಿಗೆ, “ನೀವು ನನ್ನ ತಂದೆ ದಾವೀದನಿಗೆ ಮಹಾಕರುಣೆಯನ್ನು ತೋರಿಸಿದ್ದೀರಿ, ಅವನಿಗೆ ಬದಲಾಗಿ ನಾನು ಆಳುವಂತೆ ಮಾಡಿದಿರಿ.</verse>
				<verse number="9">ಈಗ ಯೆಹೋವ ದೇವರೇ, ನೀವು ನನ್ನ ತಂದೆ ದಾವೀದನಿಗೆ ಮಾಡಿದ ವಾಗ್ದಾನವು ದೃಢವಾಗಲಿ. ಏಕೆಂದರೆ ಭೂಮಿಯ ಧೂಳಿನಷ್ಟು ಅಸಂಖ್ಯಾತ ಜನರ ಮೇಲೆ ನನ್ನನ್ನು ಅರಸನನ್ನಾಗಿ ಮಾಡಿದ್ದೀರಿ.</verse>
				<verse number="10">ನಾನು ಈ ಜನರನ್ನು ಪರಿಪಾಲಿಸುವುದಕ್ಕೆ ಜ್ಞಾನವನ್ನೂ, ತಿಳುವಳಿಕೆಯನ್ನೂ ಕೊಡಿರಿ. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?” ಎಂದನು.</verse>
				<verse number="11">ಆಗ ದೇವರು ಸೊಲೊಮೋನನಿಗೆ, “ಇದು ನಿನ್ನ ಹೃದಯದಲ್ಲಿ ಇದ್ದುದರಿಂದಲೂ ನೀನು ಐಶ್ವರ್ಯವನ್ನೂ, ಸ್ಥಿತಿಯನ್ನೂ, ಘನವನ್ನೂ, ನಿನ್ನ ಶತ್ರುಗಳ ಪ್ರಾಣವನ್ನೂ ಕೇಳದೆ ಮತ್ತು ಹೆಚ್ಚಾದ ದಿವಸಗಳನ್ನೂ ನೀನು ಕೇಳದೆ, ನಾನು ಯಾರ ಮೇಲೆ ನಿನ್ನನ್ನು ಅರಸನಾಗಿ ಮಾಡಿದೆನೋ, ಆ ನನ್ನ ಜನರಿಗೆ ನೀನು ನ್ಯಾಯತೀರಿಸುವ ಹಾಗೆ, ಜ್ಞಾನವನ್ನೂ, ತಿಳುವಳಿಕೆಯನ್ನೂ ನೀನು ಕೇಳಿದ್ದರಿಂದಲೂ;</verse>
				<verse number="12">ಜ್ಞಾನ ಮತ್ತು ತಿಳುವಳಿಕೆಯನ್ನು ನಿನಗೆ ಕೊಡುತ್ತೇನೆ. ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸರಲ್ಲಿ ಯಾರಿಗೂ ಇಲ್ಲದಂಥ ಮತ್ತು ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ, ಆಸ್ತಿಯನ್ನೂ, ಘನವನ್ನೂ ಕೊಡುತ್ತೇನೆ,” ಎಂದರು.</verse>
				<verse number="13">ತರುವಾಯ ಸೊಲೊಮೋನನು ಗಿಬ್ಯೋನಿನ ಉನ್ನತ ಸ್ಥಳದಲ್ಲಿದ್ದ ದೇವದರ್ಶನ ಗುಡಾರವನ್ನು ಬಿಟ್ಟು, ಯೆರೂಸಲೇಮಿಗೆ ಬಂದು, ಇಸ್ರಾಯೇಲನ್ನು ಆಳಿದನು.</verse>
				<verse number="14">ಇದಲ್ಲದೆ ಸೊಲೊಮೋನನು ರಥಗಳನ್ನೂ, ರಾಹುತರನ್ನೂ ಕೂಡಿಸಿದನು. ಸಾವಿರದ ನಾನೂರು ರಥಗಳು, ಹನ್ನೆರಡು ಸಾವಿರ ಕುದುರೆಯ ರಾಹುತರು ಇದ್ದರು. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೇ ಇರಿಸಿದನು, ಉಳಿದವುಗಳನ್ನು ರಥಗಳ ಪಟ್ಟಣಗಳಲ್ಲಿಯೂ ಇರಿಸಿದನು.</verse>
				<verse number="15">ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಬಂಗಾರವನ್ನು ಕಲ್ಲುಗಳಂತೆಯೂ, ದೇವದಾರು ಮರಗಳನ್ನು ತಗ್ಗಿನಲ್ಲಿರುವ ಅತ್ತಿಮರಗಳಂತೆಯೂ ಪರಿಗಣಿಸಲಾಯಿತು.</verse>
				<verse number="16">ಇದಲ್ಲದೆ ಸೊಲೊಮೋನನಿಗೆ ಈಜಿಪ್ಟಿನಿಂದಲೂ ಕುವೆಯಿಂದಲೂ ಕುದುರೆಗಳು ಬರುತ್ತಿದ್ದವು. ಅರಸನ ವರ್ತಕರು ಅವುಗಳನ್ನು ಹಿಂಡುಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು</verse>
				<verse number="17">ಹಾಗೆಯೇ ಈಜಿಪ್ಟಿನಿಂದ ಆರುನೂರು ಬೆಳ್ಳಿ ನಾಣ್ಯಗಳ ಕ್ರಯಕ್ಕೆ ಒಂದು ರಥವನ್ನೂ ನೂರ ಐವತ್ತು ಬೆಳ್ಳಿ ನಾಣ್ಯಗಳ ಕ್ರಯಕ್ಕೆ ಒಂದು ಕುದುರೆಯನ್ನೂ ತರಿಸುತ್ತಿದ್ದರು. ಈ ಪ್ರಕಾರ ಹಿತ್ತಿಯರ ಮತ್ತು ಅರಾಮಿನ ಅರಸುಗಳೆಲ್ಲರು ಇವರ ಮುಖಾಂತರವಾಗಿಯೇ ತರಿಸುತ್ತಿದ್ದರು.</verse>
			</chapter>
			<chapter number="2">
				<verse number="1">ಯೆಹೋವ ದೇವರಿಗೋಸ್ಕರ ಒಂದು ಆಲಯವನ್ನೂ, ತನಗೋಸ್ಕರ ಒಂದು ಅರಮನೆಯನ್ನೂ ಕಟ್ಟಿಸಲು ಸೊಲೊಮೋನನು ಅಪ್ಪಣೆಕೊಟ್ಟನು.</verse>
				<verse number="2">ಅದಕ್ಕಾಗಿ 70,000 ಹೊರುವವರನ್ನೂ, 80,000 ಬೆಟ್ಟದಲ್ಲಿ ಕಡಿಯುವವರನ್ನೂ, ಇವರ ಮೇಲೆ ಕಾವಲಾಗಿರಲು 3,600 ಮಂದಿಯನ್ನೂ ಆಯ್ಕೆಮಾಡಿದನು.</verse>
				<verse number="3">ಸೊಲೊಮೋನನು ಟೈರಿನ ಅರಸನಾದ ಹೀರಾಮನಿಗೆ, “ನೀನು ನನ್ನ ತಂದೆ ದಾವೀದನಿಗೆ ವಾಸವಾಗಿರುವ ಅರಮನೆಯನ್ನು ಕಟ್ಟಿಸಲು, ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ, ಹಾಗೆಯೇ ನನಗೂ ಮಾಡು.</verse>
				<verse number="4">ನನ್ನ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವುದಕ್ಕೂ, ದೇವಸನ್ನಿಧಿಗೆ ಪರಿಮಳ ಧೂಪವನ್ನು ಅರ್ಪಿಸುವ ನಿತ್ಯ ಸಮ್ಮುಖದ ರೊಟ್ಟಿಗೋಸ್ಕರವೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಇಸ್ರಾಯೇಲರಿಗೆ ನಿರಂತರವಾಗಿರಲು ನೇಮಿಸಿದ ನಮ್ಮ ದೇವರಾದ ಯೆಹೋವ ದೇವರ ಹಬ್ಬಗಳಲ್ಲಿಯೂ, ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ನಮ್ಮ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.</verse>
				<verse number="5">“ನಾನು ಕಟ್ಟಿಸುವ ಆಲಯವು ದೊಡ್ಡದು. ಏಕೆಂದರೆ ನಮ್ಮ ದೇವರು ಸಕಲ ದೇವರುಗಳಿಗಿಂತ ದೊಡ್ಡವರಾಗಿದ್ದಾರೆ.</verse>
				<verse number="6">ಆದರೆ ಅವರಿಗೋಸ್ಕರ ಆಲಯವನ್ನು ಕಟ್ಟಿಸಲು ಸಮರ್ಥನಾದವನು ಯಾರು? ಆಕಾಶವೂ ಉನ್ನತೋನ್ನತ ಆಕಾಶವೂ ಅವರಿಗೆ ಸಾಲದು. ಅವರ ಸನ್ನಿಧಿಯಲ್ಲಿ ಯಜ್ಞವನ್ನು ಅರ್ಪಿಸುವುದಕ್ಕೆ ಒಂದು ಆಲಯವನ್ನು ಕಟ್ಟಬಹುದೇ ಹೊರತು ಅವರಿಗೆ ಆಲಯವನ್ನು ಕಟ್ಟಿಸಲು ನಾನು ಎಷ್ಟರವನು?</verse>
				<verse number="7">“ಆದ್ದರಿಂದ ಬಂಗಾರದಲ್ಲಿಯೂ, ಬೆಳ್ಳಿಯಲ್ಲಿಯೂ, ಕಂಚಿನಲ್ಲಿಯೂ, ಕಬ್ಬಿಣದಲ್ಲಿಯೂ, ರಕ್ತವರ್ಣ, ಲೋಹಿತ ವರ್ಣ, ನೀಲ ವರ್ಣಗಳಲ್ಲಿಯೂ ಕೆಲಸವನ್ನು ಮಾಡಲು ಜ್ಞಾನವುಳ್ಳವನನ್ನು, ನನ್ನ ತಂದೆ ದಾವೀದನು ಸಿದ್ಧಮಾಡಿದ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ, ನನ್ನ ಬಳಿಯಲ್ಲಿರುವ ಕುಶಲಕರ್ಮಿಗಳ ಸಂಗಡ ಕೆತ್ತಲು ತಿಳುವಳಿಕೆಯುಳ್ಳವನಾಗಿ ಇರುವವನನ್ನು ನನ್ನ ಬಳಿಗೆ ಕಳುಹಿಸು.</verse>
				<verse number="8">“ನೀನು ಇಲ್ಲಿಗೆ ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸುಗಂಧದ ಮರಗಳನ್ನೂ ಲೆಬನೋನಿನಿಂದ ನನ್ನ ಬಳಿಗೆ ಕಳುಹಿಸು. ಲೆಬನೋನಿನಲ್ಲಿ ಮರಗಳನ್ನು ಕಡಿಯಲು ನಿನ್ನ ಸೇವಕರು ನಿಪುಣರಾಗಿದ್ದಾರೆ. ನನ್ನ ಸೇವಕರು ಅವರ ಸಂಗಡ ಇರುವರು.</verse>
				<verse number="9">ನನಗೆ ಮರಗಳನ್ನು ಬಹಳವಾಗಿ ಸಿದ್ಧಮಾಡುವುದಕ್ಕೆ ನಾನು ಕಟ್ಟಿಸುವ ಆಲಯವು ದೊಡ್ಡದಾಗಿಯೂ, ಅದ್ಭುತಕರವಾದದ್ದಾಗಿಯೂ ಇರಬೇಕು.</verse>
				<verse number="10">ಮರ ಕಡಿಯುವ ನಿನ್ನ ಸೇವಕರಿಗಾಗಿ, ಎರಡು ಸಾವಿರ ಟನ್ ಗೋಧಿಯನ್ನೂ, ಮೂರು ಸಾವಿರ ಟನ್ ಜವೆಗೋಧಿಯನ್ನೂ, ನಾಲ್ಕು ಲಕ್ಷ ನಲವತ್ತು ಸಾವಿರ ಲೀಟರ್ ದ್ರಾಕ್ಷಾರಸವನ್ನೂ, ನಾಲ್ಕು ಲಕ್ಷ ನಲವತ್ತು ಸಾವಿರ ಲೀಟರ್ ಎಣ್ಣೆಯನ್ನೂ ಕೊಡುವೆನು,” ಎಂದು ಹೇಳಿಸಿದನು.</verse>
				<verse number="11">ಆಗ ಟೈರಿನ ಅರಸನಾದ ಹೀರಾಮನು ಉತ್ತರವನ್ನು ಬರೆದು ಸೊಲೊಮೋನನಿಗೆ ಕಳುಹಿಸಿದನು: “ಯೆಹೋವ ದೇವರು ತಮ್ಮ ಜನರನ್ನು ಪ್ರೀತಿಮಾಡಿದ್ದರಿಂದ, ನಿನ್ನನ್ನು ಜನರ ಮೇಲೆ ಅರಸನನ್ನಾಗಿ ಮಾಡಿದ್ದಾರೆ,” ಎಂದು ಹೇಳಿದನು.</verse>
				<verse number="12">ಇದಲ್ಲದೆ ಹೀರಾಮನು, “ಯೆಹೋವ ದೇವರಿಗೋಸ್ಕರ ಆಲಯವನ್ನೂ ತನ್ನ ರಾಜ್ಯಕ್ಕೋಸ್ಕರ ಅರಮನೆಯನ್ನೂ ಕಟ್ಟಿಸುವುದಕ್ಕೆ ಅರಸನಾದ ದಾವೀದನಿಗೆ ಬುದ್ಧಿ ವಿವೇಚನೆಯುಳ್ಳ ಒಬ್ಬ ಮಗನನ್ನು ಕೊಟ್ಟಿದ್ದಾರೆ; ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ.</verse>
				<verse number="13">“ಈಗ ನಾನು ಜ್ಞಾನಿಯೂ, ಕಲಾ ಪ್ರವೀಣನೂ ಆದ ಹೂರಾಮ ಅಬೀ ಎಂಬ ಒಬ್ಬನನ್ನು ಕಳುಹಿಸಿದ್ದೇನೆ.</verse>
				<verse number="14">ಅವನು ದಾನನ ಪುತ್ರಿಯರಲ್ಲಿರುವ ಒಬ್ಬಳ ಮಗನಾಗಿದ್ದಾನೆ. ಅವನ ತಂದೆ ಟೈರಿನವನು. ಅವನು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಕಲ್ಲು, ಮರ, ಧೂಮ್ರವರ್ಣ, ನೀಲವರ್ಣ, ನಯವಾದ ನಾರಿನ ವಸ್ತ್ರ, ರಕ್ತವರ್ಣ ಇವುಗಳಲ್ಲಿ ಕೆಲಸವನ್ನು ಮಾಡುವುದಕ್ಕೂ ತರಬೇತಿಯನ್ನು ಹೊಂದಿದ್ದನು. ತನಗೆ ಒಪ್ಪಿಸಲಾಗುವ ಎಲ್ಲಾ ತರಹದ ಕೆತ್ತನೆಯ ಕೆಲಸಗಳನ್ನು ನಡೆಸುವುದಕ್ಕೂ ಇವನು ಸಮರ್ಥನು. ನಿನ್ನ ತಂದೆಯೂ ನನ್ನ ಒಡೆಯನಾದ ದಾವೀದನೂ ಗೊತ್ತುಮಾಡಿದ ಕಲಾಕುಶಲರೊಡನೆ ಇವನು ಕೆಲಸಮಾಡಲಿ.</verse>
				<verse number="15">“ಈಗ ನನ್ನ ಒಡೆಯನು ಹೇಳಿದ ಆ ಗೋಧಿಯನ್ನೂ, ಜವೆಗೋಧಿಯನ್ನೂ, ಎಣ್ಣೆಯನ್ನೂ, ದ್ರಾಕ್ಷಾರಸವನ್ನೂ ತನ್ನ ಸೇವಕರಿಗೆ ಕಳುಹಿಸಲಿ.</verse>
				<verse number="16">ಇದಲ್ಲದೆ ನಾವು ಲೆಬನೋನಿನಲ್ಲಿ ನಿನಗೆ ಬೇಕಾದಷ್ಟು ಮರಗಳನ್ನು ಕಡಿದು ತೆಪ್ಪಗಳಲ್ಲಿ ಸಮುದ್ರದ ಮಾರ್ಗವಾಗಿ ಯೊಪ್ಪಕ್ಕೆ ತೆಗೆದುಕೊಂಡು ಬರುತ್ತೇವೆ. ನೀನು ಅವುಗಳನ್ನು ಯೆರೂಸಲೇಮಿಗೆ ಒಯ್ಯಬಹುದು.”</verse>
				<verse number="17">ಆಮೇಲೆ ಸೊಲೊಮೋನನು ತನ್ನ ತಂದೆ ದಾವೀದನು ಮಾಡಿಸಿದ ಜನಗಣತಿಯ ಆಧಾರದಿಂದ, ಇಸ್ರಾಯೇಲ್ ದೇಶದಲ್ಲಿದ್ದ ಪ್ರವಾಸಿಗಳಾಗಿದ್ದ ಇತರ ಜನರ ಜನಗಣತಿ ಮಾಡಿಸಿದ ನಂತರ, ಇತರ ಜನರ ಒಟ್ಟು ಸಂಖ್ಯೆ 1,53,600 ಮಂದಿ ಇದ್ದರು.</verse>
				<verse number="18">ಆಗ ಅವರಲ್ಲಿ 70,000 ಮಂದಿಯನ್ನು ಹೊರೆ ಹೊರುವುದಕ್ಕೂ, 80,000 ಮಂದಿಯನ್ನು ಬೆಟ್ಟದಲ್ಲಿ ಕಲ್ಲು ಕಡಿಯುವುದಕ್ಕೂ, 3,600 ಮಂದಿಯನ್ನು ಕೆಲಸದವರ ಮೇಲೆ ಕಾವಲಾಗಿರುವುದಕ್ಕೂ ಇರಿಸಿದನು.</verse>
			</chapter>
			<chapter number="3">
				<verse number="1">ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆ ದಾವೀದನಿಗೆ ಯೆಹೋವ ದೇವರು ಕಾಣಿಸಿಕೊಂಡ ಸ್ಥಳವಾದ ಮೊರೀಯಾ ಬೆಟ್ಟದ ಮೇಲೆ, ದಾವೀದನು ಸಿದ್ಧಮಾಡಿದ ಸ್ಥಳವಾದ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿದನು.</verse>
				<verse number="2">ತನ್ನ ಆಳಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಿನ ಎರಡನೆಯ ದಿವಸದಲ್ಲಿ ಕಟ್ಟುವುದಕ್ಕೆ ಆರಂಭಿಸಿದನು.</verse>
				<verse number="3">ದೇವರ ಆಲಯವನ್ನು ಕಟ್ಟುವುದಕ್ಕೆ ಸೊಲೊಮೋನನು ಹಾಕಿಸಿದ ಅಸ್ತಿವಾರಗಳು ಏನೆಂದರೆ ಮೊದಲಿನ ಅಳತೆಯ ಪ್ರಕಾರವಾಗಿ ಅದರ ಉದ್ದ ಸುಮಾರು 27 ಮೀಟರ್ ಮತ್ತು ಅದರ ಅಗಲ 9 ಮೀಟರ್;</verse>
				<verse number="4">ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಸುಮಾರು 9 ಮೀಟರ್ ಉದ್ದವಾಗಿತ್ತು; 54 ಮೀಟರ್ ಎತ್ತರವಾಗಿತ್ತು. ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಸಿದನು.</verse>
				<verse number="5">ಅವನು ದೊಡ್ಡ ತುರಾಯಿ ಮರಗಳಿಂದ ಮುಚ್ಚಿದ ಕೋಣೆಯನ್ನು ಶುದ್ಧ ಬಂಗಾರದಿಂದ ಹೊದಿಸಿ, ಅದರ ಮೇಲೆ ಖರ್ಜೂರದ ಗಿಡಗಳನ್ನೂ, ಸರಪಣಿಗಳನ್ನೂ ಕೆತ್ತಿಸಿದನು.</verse>
				<verse number="6">ಇದಲ್ಲದೆ ಸೌಂದರ್ಯದ ನಿಮಿತ್ತವಾಗಿ ಅಮೂಲ್ಯವಾದ ರತ್ನಗಳಿಂದ ಆ ಆಲಯವನ್ನು ಮುಚ್ಚಿದನು. ಅದರ ಬಂಗಾರವು ಪರ್ವಯಿಮ್ ದೇಶದ್ದು.</verse>
				<verse number="7">ಆಲಯದ ತೊಲೆಗಳನ್ನೂ, ಸ್ತಂಭಗಳನ್ನೂ, ಗೋಡೆಗಳನ್ನೂ, ಬಾಗಿಲುಗಳನ್ನೂ, ಅವನು ಬಂಗಾರದಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳನ್ನೂ ಕೆತ್ತಿಸಿದನು.</verse>
				<verse number="8">ಅವನು ಮಹಾಪರಿಶುದ್ಧವಾದ ಸ್ಥಳವನ್ನು ಕಟ್ಟಿದನು. ಅದರ ಉದ್ದವು ಆಲಯದ ಅಗಲದ ಪ್ರಕಾರ 9 ಮೀಟರ್; ಅದರ ಅಗಲ 9 ಮೀಟರ್. ಅವನು ಅದನ್ನು 20,000 ಕಿಲೋಗ್ರಾಂ ಶುದ್ಧ ಬಂಗಾರದಿಂದ ಹೊದಿಸಿದನು.</verse>
				<verse number="9">ಅದರ ಮೊಳೆಗಳು ಐನೂರ ಎಪ್ಪತ್ತು ಕಿಲೋಗ್ರಾಂಗಳ ತೂಕ ಬಂಗಾರದ್ದಾಗಿತ್ತು. ಹಾಗೆಯೇ ಮೇಲಿನ ಕೊಠಡಿಗಳನ್ನು ಬಂಗಾರದಿಂದ ಹೊದಿಸಿದನು.</verse>
				<verse number="10">ಮಹಾಪರಿಶುದ್ಧವಾದ ಸ್ಥಳದಲ್ಲಿ ಎರಡು ಕೆರೂಬಿಗಳನ್ನು ಮಾಡಿಸಿ, ಬಂಗಾರದಿಂದ ಅವುಗಳನ್ನು ಹೊದಿಸಿದನು.</verse>
				<verse number="11">ಕೆರೂಬಿಗಳ ರೆಕ್ಕೆಗಳು 9 ಮೀಟರ್ ಉದ್ದವಾಗಿದ್ದವು. ಒಂದು ರೆಕ್ಕೆಯು ಎರಡೂವರೆ ಮೀಟರ್ ಉದ್ದವಾಗಿದ್ದು, ಆಲಯದ ಗೋಡೆಯವರೆಗೆ ಮುಟ್ಟಿತ್ತು; ಮತ್ತೊಂದು ರೆಕ್ಕೆ ಎರಡೂವರೆ ಮೀಟರ್ ಉದ್ದವಾಗಿದ್ದು, ಇನ್ನೊಂದು ಕೆರೂಬಿಯ ರೆಕ್ಕೆಯವರೆಗೂ ಮುಟ್ಟಿತ್ತು.</verse>
				<verse number="12">ಹಾಗೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಎರಡೂವರೆ ಮೀಟರ್ ಉದ್ದವಾಗಿದ್ದು, ಆಲಯದ ಗೋಡೆಯವರೆಗೆ ಮುಟ್ಟಿತ್ತು; ಇನ್ನೊಂದು ರೆಕ್ಕೆಯು ಎರಡೂವರೆ ಮೀಟರ್ ಉದ್ದವಾಗಿದ್ದು, ಬೇರೆ ಇರುವ ಕೆರೂಬಿಯ ರೆಕ್ಕೆಗೆ ಕೂಡಿಕೊಂಡಿತ್ತು.</verse>
				<verse number="13">ಈ ಕೆರೂಬಿಗಳ ರೆಕ್ಕೆಗಳು 9 ಮೀಟರ್ ಉದ್ದಕ್ಕೆ ಚಾಚಿಕೊಂಡವು. ಅವು ತಮ್ಮ ಕಾಲುಗಳ ಮೇಲೆ ನಿಂತವು. ಅವುಗಳ ಮುಖಗಳು ಒಳಗಡೆಯಾಗಿದ್ದವು.</verse>
				<verse number="14">ಪರದೆಯನ್ನು ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ಹೊಸೆದ ನಾರಿನಿಂದ ಮಾಡಿಸಿ, ಅದರಲ್ಲಿ ಕೆರೂಬಿಗಳುಳ್ಳದ್ದನ್ನಾಗಿ ಮಾಡಿಸಿದನು.</verse>
				<verse number="15">ಇದಲ್ಲದೆ ಅವನು ಕಟ್ಟಡದ ಪ್ರವೇಶದ್ವಾರದಲ್ಲಿ ಎರಡು ಸ್ತಂಭಗಳನ್ನು ನಿರ್ಮಿಸಿದನು, ಪ್ರತಿಯೊಂದೂ ಹದಿನೈದು ಮೀಟರ್ ಎಪ್ಪತ್ತೈದು ಸೆಂಟಿಮೀಟರ್ ಎತ್ತರ, ಪ್ರತಿಯೊಂದರ ಮೇಲೆಯೂ ನಿರ್ಮಿಸಲಾದ ಪ್ರತಿಯೊಂದು ತಲೆಗಳು ಎರಡೂವರೆ ಮೀಟರ್ ಉದ್ದವಿತ್ತು.</verse>
				<verse number="16">ಗರ್ಭಗುಡಿಯಲ್ಲಿ ಸರಪಣಿಗಳಂತೆ ಮಾಡಿ, ಸ್ತಂಭಗಳ ತುದಿಗಳ ಮೇಲೆ ಇಟ್ಟು, ನೂರು ದಾಳಿಂಬೆ ಹಣ್ಣುಗಳನ್ನು ಮಾಡಿ, ಸರಪಣಿಗಳ ಮೇಲೆ ಇರಿಸಿದನು.</verse>
				<verse number="17">ಆ ಸ್ತಂಭಗಳನ್ನು ಮಂದಿರದ ಮುಂಭಾಗದಲ್ಲಿ ಒಂದನ್ನು ಬಲಗಡೆಯಲ್ಲಿಯೂ, ಇನ್ನೊಂದನ್ನು ಎಡಗಡೆಯಲ್ಲಿಯೂ ನಿಲ್ಲಿಸಿದನು. ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್ ಎಂದೂ, ಎಡಗಡೆಯ ಸ್ತಂಭಕ್ಕೆ ಬೋವಾಜ್ ಎಂದೂ ಹೆಸರಿಟ್ಟನು.</verse>
			</chapter>
			<chapter number="4">
				<verse number="1">ಇವುಗಳಲ್ಲದೆ, ಸೊಲೊಮೋನನು ಕಂಚಿನ ಬಲಿಪೀಠವನ್ನು ಮಾಡಿಸಿದನು; ಅದರ ಉದ್ದ ಒಂಬತ್ತು ಮೀಟರ್, ಅಗಲ ಒಂಬತ್ತು ಮೀಟರ್, ಎತ್ತರ ಸುಮಾರು ಐದು ಮೀಟರ್.</verse>
				<verse number="2">ಅನಂತರ ಅವನು ಸಮುದ್ರಪಾತ್ರೆ ಎಂದು ಕರೆಯಲಾಗುವ ಎರಕದ ದೊಡ್ಡ ಪಾತ್ರೆಯನ್ನು ಮಾಡಿಸಿದನು; ಅದು ಚಕ್ರಾಕಾರವಾಗಿ ಅಂಚಿನಿಂದ ಅಂಚಿಗೆ ಸುಮಾರು ನಾಲ್ಕು ಮೀಟರ್; ಅದರ ಎತ್ತರ ಸುಮಾರು ಎರಡು ಮೀಟರ್; ಸುತ್ತಳತೆ ಸುಮಾರು ಹದಿನಾಲ್ಕು ಮೀಟರಾಗಿತ್ತು;</verse>
				<verse number="3">ಅದರ ಅಂಚಿನ ಕೆಳಭಾಗದಲ್ಲಿ ಅದರ ಸುತ್ತಲೂ ಎತ್ತುಗಳ ರೂಪಗಳಿದ್ದವು; ಅವು ಒಂದೊಂದು ಮೀಟರಿಗೆ ಹತ್ತರಂತೆ, ಆ ಕೊಳದ ಪಾತ್ರೆಯ ಸುತ್ತಲೂ ಇದ್ದವು; ಇದು ಎರಕ ಹೊಯ್ಯುವಾಗ, ಎತ್ತುಗಳ ರೂಪಗಳು ಎರಡು ಸಾಲಾಗಿ ಎರಕ ಹೊಯ್ಸಿದನು.</verse>
				<verse number="4">ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ, ಮೂರು ಪಶ್ಚಿಮಕ್ಕೂ, ಮೂರು ದಕ್ಷಿಣಕ್ಕೂ, ಮೂರು ಪೂರ್ವಕ್ಕೂ ಮುಖಮಾಡಿಕೊಂಡಿದ್ದವು. ಆ ಕೊಳವು ಅವುಗಳ ಮೇಲೆ ಇತ್ತು. ಅವುಗಳ ಹಿಂಭಾಗಗಳೆಲ್ಲಾ ಒಳಮುಖವಾಗಿದ್ದವು.</verse>
				<verse number="5">ಅದರ ದಪ್ಪವು ಅಂಗೈ ಅಗಲದಷ್ಟಾಗಿಯೂ, ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ, ತಾವರೆ ಪುಷ್ಪದ ಹಾಗೆಯೂ ಇತ್ತು. ಅದು ಅರವತ್ತಾರು ಸಾವಿರ ಲೀಟರ್ ನೀರನ್ನು ಹಿಡಿಯುತ್ತಿತ್ತು.</verse>
				<verse number="6">ಇದಲ್ಲದೆ ಹತ್ತು ತೊಟ್ಟಿಗಳನ್ನು ಮಾಡಿಸಿ, ಅವುಗಳಲ್ಲಿ ತೊಳೆಯುವ ನಿಮಿತ್ತವಾಗಿ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿದನು. ದಹನಬಲಿಗೋಸ್ಕರ ಅರ್ಪಿಸುವವುಗಳನ್ನು ಅವುಗಳಲ್ಲಿ ತೊಳೆಯುತ್ತಿದ್ದರು. ಆದರೆ ಆ ಕೊಳವು ಯಾಜಕರು ತೊಳೆದುಕೊಳ್ಳುವುದಕ್ಕೆ ಇತ್ತು.</verse>
				<verse number="7">ಅವುಗಳ ಮಾದರಿಯ ಪ್ರಕಾರವಾಗಿ ಹತ್ತು ಬಂಗಾರದ ದೀಪಸ್ತಂಭಗಳನ್ನು ಮಾಡಿಸಿ, ಮಂದಿರದಲ್ಲಿ ಬಲಗಡೆ ಐದನ್ನೂ, ಎಡಗಡೆ ಐದನ್ನೂ ಇರಿಸಿದನು.</verse>
				<verse number="8">ಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ, ಮಂದಿರದಲ್ಲಿ ಬಲಗಡೆ ಐದನ್ನೂ, ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬಟ್ಟಲುಗಳನ್ನು ಮಾಡಿಸಿದನು.</verse>
				<verse number="9">ಯಾಜಕರ ಅಂಗಳವನ್ನೂ, ದೊಡ್ಡ ಅಂಗಳವನ್ನೂ, ಅಂಗಳಗಳಿಗೋಸ್ಕರ ಬಾಗಿಲುಗಳನ್ನೂ ಮಾಡಿಸಿ, ಆ ಬಾಗಿಲುಗಳನ್ನು ಕಂಚಿನಿಂದ ಹೊದಿಸಿದನು.</verse>
				<verse number="10">ಸಮುದ್ರ ಎಂದು ಕರೆಯಲಾದ ದೊಡ್ಡ ಪಾತ್ರೆಯನ್ನು ಬಲಗಡೆಯಲ್ಲಿ ಅಂದರೆ ಆಗ್ನೇಯ ದಿಕ್ಕಿನಲ್ಲಿ ಇರಿಸಿದನು.</verse>
				<verse number="11">ಇದಲ್ಲದೆ ಹೂರಾಮನು ಪಾತ್ರೆಗಳನ್ನೂ, ಸಲಿಕೆಗಳನ್ನೂ, ಬಟ್ಟಲುಗಳನ್ನೂ ಮಾಡಿದನು. ಯೆಹೋವ ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊಮೋನನು ಒಪ್ಪಿಸಿದ ಎಲ್ಲಾ ಕೆಲಸಗಳನ್ನು ಹೂರಾಮನು ಮಾಡಿ ತೀರಿಸಿದನು:</verse>
				<verse number="12">ಅವು ಯಾವುವೆಂದರೆ, ಎರಡು ಸ್ತಂಭಗಳು, ಆ ಸ್ತಂಭಗಳ ಮೇಲಿನ ಎರಡು ಕುಂಭಗಳು, ಆ ಎರಡು ಕುಂಭಗಳನ್ನು ಮುಚ್ಚುವ ಎರಡು ಜಾಲರಿಗಳು.</verse>
				<verse number="13">ಎರಡು ಜಾಲರಿ ಸಾಮಾನುಗಳಿಗೆ ನಾನೂರು ದಾಳಿಂಬೆ ಹಣ್ಣುಗಳು, ಸ್ತಂಭಗಳ ಮೇಲೆ ಇರುವ ಎರಡು ಕುಂಭಗಳನ್ನು ಮುಚ್ಚುವಂತೆ ಒಂದು ಜಾಲರಿ ಸಲಕರಣೆಗಳಿಗೆ ಎರಡು ಸಾಲಿನ ದಾಳಿಂಬೆ ಹಣ್ಣುಗಳನ್ನು ಮಾಡಿದನು.</verse>
				<verse number="14">ಇದಲ್ಲದೆ ಅವನು ಪೀಠಗಳನ್ನು ಅವುಗಳ ಮೇಲಿರುವ ತೊಟ್ಟಿಗಳನ್ನು ಮಾಡಿದನು.</verse>
				<verse number="15">ಸಮುದ್ರಪಾತ್ರೆಯು ಅದರ ಕೆಳಗಿರುವ ಹನ್ನೆರಡು ಎತ್ತುಗಳು,</verse>
				<verse number="16">ಪಾತ್ರೆಗಳು, ಸಲಿಕೆಗಳು, ಮುಳ್ಳುಗಳು. ಅವುಗಳ ಎಲ್ಲಾ ವಸ್ತುಗಳನ್ನೂ ಅರಸನಾದ ಸೊಲೊಮೋನನಿಗೆ ಅವನ ತಂದೆಯು ಹೇಳಿದಂತೆ ಹೂರಾಮ ಅಬೀ ಹೊಳೆಯುವ ಕಂಚಿನಿಂದ ಯೆಹೋವ ದೇವರ ಆಲಯಕ್ಕೋಸ್ಕರ ಮಾಡಿದನು.</verse>
				<verse number="17">ಯೊರ್ದನಿಗೆ ಸೇರಿದ ಬಯಲಾದ ಸುಕ್ಕೋತಿಗೂ ಚರೇದನಿಗೂ ನಡುವೆ ಇರುವ ಜೇಡಿಮಣ್ಣಿನ ಅಚ್ಚುಗಳಲ್ಲಿ ಅರಸನು ಅವುಗಳನ್ನು ಎರಕ ಹೊಯ್ಯಿಸಿದನು.</verse>
				<verse number="18">ಸೊಲೊಮೋನನು ಮಾಡಿಸಿದ ಈ ಸಲಕರಣೆಗಳೆಲ್ಲಾ ಬಹು ಹೆಚ್ಚಾಗಿದ್ದರಿಂದ ಆ ಕಂಚಿನ ತೂಕವು ಎಷ್ಟೆಂದು ನಿರ್ಧರಿಸಲಾಗಲಿಲ್ಲ.</verse>
				<verse number="19">ಸೊಲೊಮೋನನು ದೇವರ ಆಲಯದ ಎಲ್ಲಾ ಸಲಕರಣೆಗಳನ್ನು ಮಾಡಿಸಿದನು. ಅವು ಯಾವುವೆಂದರೆ: ಬಂಗಾರದ ಧೂಪವೇದಿಯನ್ನು, ಸಮ್ಮುಖದ ರೊಟ್ಟಿಗಳನ್ನು ಇಡುವುದಕ್ಕೆ ಮೇಜುಗಳನ್ನು,</verse>
				<verse number="20">ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂಭಾಗದಲ್ಲಿ ಶುದ್ಧ ಬಂಗಾರದ ದೀಪಸ್ತಂಭಗಳನ್ನೂ ಅವುಗಳ ದೀಪಗಳನ್ನೂ,</verse>
				<verse number="21">ಹೂವುಗಳನ್ನೂ, ದೀಪಗಳ ಚಿಮಟಿಗಳನ್ನೂ ಶುದ್ಧ ಬಂಗಾರದಿಂದ ಮಾಡಿಸಿದನು.</verse>
				<verse number="22">ಶುದ್ಧ ಬಂಗಾರದಿಂದ ಕತ್ತರಿಗಳು, ಬೋಗುಣಿಗಳು, ಅಗ್ನಿಪಾತ್ರೆಗಳು, ಅಗ್ಗಿಷ್ಟಿಗೆ ಇವುಗಳನ್ನು ಮಾಡಿಸಿದನು. ಇದಲ್ಲದೆ ಆಲಯದ ಪ್ರವೇಶ ದ್ವಾರವೂ, ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯ ಬಾಗಿಲುಗಳೂ, ಮಂದಿರದ ಮನೆ ಬಾಗಿಲುಗಳೂ ಬಂಗಾರದವುಗಳಾಗಿದ್ದವು.</verse>
			</chapter>
			<chapter number="5">
				<verse number="1">ಹೀಗೆಯೇ ಸೊಲೊಮೋನನು ಯೆಹೋವ ದೇವರ ಆಲಯಕ್ಕೋಸ್ಕರ ಮಾಡಿಸಿದ ಕೆಲಸವೆಲ್ಲಾ ಮುಗಿಯಿತು. ಆಗ ಸೊಲೊಮೋನನು ತನ್ನ ತಂದೆ ದಾವೀದನು ಪ್ರತಿಷ್ಠೆ ಮಾಡಿದ ಬೆಳ್ಳಿಯನ್ನೂ, ಬಂಗಾರವನ್ನೂ, ಎಲ್ಲಾ ಸಲಕರಣೆಗಳನ್ನೂ ದೇವರ ಆಲಯದ ಭಂಡಾರಕ್ಕೆ ಸೇರಿಸಿದನು.</verse>
				<verse number="2">ಆಗ ಚೀಯೋನೆಂಬ ದಾವೀದನ ಪಟ್ಟಣದಿಂದ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ತರುವ ನಿಮಿತ್ತ, ಸೊಲೊಮೋನನು ಇಸ್ರಾಯೇಲರಲ್ಲಿ ಶ್ರೇಷ್ಠರಾಗಿರುವ ಪಿತೃಗಳಾದ ಇಸ್ರಾಯೇಲಿನ ಹಿರಿಯರನ್ನೂ, ಗೋತ್ರಗಳ ಮುಖ್ಯಸ್ಥರನ್ನೂ ಯೆರೂಸಲೇಮಿನಲ್ಲಿ ತನ್ನ ಬಳಿಗೆ ಕೂಡಿಬರುವಂತೆ ಮಾಡಿದನು.</verse>
				<verse number="3">ಆದ್ದರಿಂದ ಏಳನೆಯ ತಿಂಗಳಿನ ಹಬ್ಬದಲ್ಲಿ ಇಸ್ರಾಯೇಲಿನ ಸಮಸ್ತ ಜನರು ಅರಸನ ಬಳಿಗೆ ಕೂಡಿಬಂದರು.</verse>
				<verse number="4">ಇಸ್ರಾಯೇಲಿನ ಹಿರಿಯರೆಲ್ಲರೂ ಬಂದ ತರುವಾಯ, ಲೇವಿಯರು ಯೆಹೋವ ದೇವರ ಮಂಜೂಷವನ್ನು ಎತ್ತಿಕೊಂಡರು.</verse>
				<verse number="5">ಒಡಂಬಡಿಕೆಯ ಮಂಜೂಷವನ್ನೂ, ದೇವದರ್ಶನದ ಗುಡಾರವನ್ನೂ, ಗುಡಾರದಲ್ಲಿದ್ದ ಸಮಸ್ತ ಪರಿಶುದ್ಧವಾದ ಸಲಕರಣೆಗಳನ್ನೂ ತಂದರು. ಇವುಗಳನ್ನು ಯಾಜಕರಾದ ಲೇವಿಯರು ಹೊತ್ತುಕೊಂಡು ತಂದರು.</verse>
				<verse number="6">ಆಗ ಅರಸನಾದ ಸೊಲೊಮೋನನೂ ಅವನ ಬಳಿಯಲ್ಲಿ ಕೂಡಿದ ಇಸ್ರಾಯೇಲ್ ಜನರೆಲ್ಲರೂ ಮಂಜೂಷದ ಮುಂದೆ ನಿಂತು ಎಣಿಸಲಾಗದಷ್ಟು ಕುರಿಗಳನ್ನೂ, ಪಶುಗಳನ್ನೂ ಬಲಿಯಾಗಿ ಅರ್ಪಿಸಿದರು.</verse>
				<verse number="7">ಯಾಜಕರು ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗಿದ್ದ ಅದರ ಸ್ಥಳದಲ್ಲಿ ಇಟ್ಟರು.</verse>
				<verse number="8">ಕೆರೂಬಿಗಳು ಮಂಜೂಷವಿದ್ದ ಸ್ಥಳದ ಮೇಲೆ ತಮ್ಮ ರೆಕ್ಕೆಗಳನ್ನು ಚಾಚಿಕೊಂಡಿದ್ದವು. ಹೀಗೆಯೇ ಕೆರೂಬಿಗಳು ಮಂಜೂಷವನ್ನೂ, ಅದರ ಕೋಲುಗಳನ್ನೂ ಮೇಲಿನಿಂದ ಮುಚ್ಚಿಕೊಂಡಿದ್ದವು.</verse>
				<verse number="9">ಆ ಕೋಲುಗಳು ಮಂಜೂಷಕ್ಕಿಂತಲೂ ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗುಡಿಯ ಮುಂಭಾಗದಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು, ಆದರೆ ಅವು ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲಿಯೇ ಇವೆ.</verse>
				<verse number="10">ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಬಂದ ನಂತರ, ಯೆಹೋವ ದೇವರು ಅವರ ಸಂಗಡ ಒಡಂಬಡಿಕೆ ಮಾಡಿದಾಗ ಮೋಶೆಯು ಹೋರೇಬ್ ಬೆಟ್ಟದ ಬಳಿಯಲ್ಲಿ ಮಂಜೂಷದೊಳಗೆ ಇಟ್ಟ ಕಲ್ಲಿನ ಎರಡು ಹಲಗೆಗಳ ಹೊರತು ಅದರಲ್ಲಿ ಮತ್ತೇನೂ ಇರಲಿಲ್ಲ.</verse>
				<verse number="11">ಅಲ್ಲಿ ಇದ್ದ ಸಮಸ್ತ ಯಾಜಕರು ವರ್ಗವ್ಯತ್ಯಾಸವಿಲ್ಲದೆ ತಮ್ಮನ್ನು ಶುದ್ಧಪಡಿಸಿಕೊಂಡಿದ್ದರು.</verse>
				<verse number="12">ತಮ್ಮನ್ನು ಪ್ರತಿಷ್ಠಿಸಿಕೊಂಡಿದ್ದ ಯಾಜಕರು ಪರಿಶುದ್ಧ ಸ್ಥಳದಿಂದ ಹೊರಟಾಗ, ನಯವಾದ ನಾರು ಬಟ್ಟೆಗಳನ್ನು ಧರಿಸಿಕೊಂಡಿದ್ದ ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನ್ ಹಾಗೂ ಇವರ ಮಕ್ಕಳೂ ಸಹೋದರರೂ ತುತೂರಿಗಳನ್ನು ಊದತಕ್ಕ ನೂರಿಪ್ಪತ್ತು ಮಂದಿ ಯಾಜಕರೂ ಬಲಿಪೀಠದ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು.</verse>
				<verse number="13">ತುತೂರಿ ಊದುವವರೂ, ಸಂಗೀತಗಾರರೂ ಯೆಹೋವ ದೇವರನ್ನು ಕೊಂಡಾಡುತ್ತಾ, ಹೊಗಳುತ್ತಾ ಧ್ವನಿ ಎತ್ತಿ ಸ್ತೋತ್ರ ಮಾಡುವಂತೆ ತುತೂರಿಗಳೂ, ತಾಳಗಳೂ ಮೊದಲಾದ ಗೀತ ವಾದ್ಯಗಳಿಂದ ಕೀರ್ತಿಸಿದರು: “ಯೆಹೋವ ದೇವರು ಒಳ್ಳೆಯವರು, ಅವರ ಕೃಪೆಯು ಯುಗಯುಗಕ್ಕೆ ಇರುವುದು,” ಎಂದು ಯೆಹೋವ ದೇವರನ್ನು ಹೊಗಳುತ್ತಿದ್ದ ಹಾಗೆ, ಯೆಹೋವ ದೇವರ ಆಲಯವು ಮೇಘದಿಂದ ತುಂಬಿತು.</verse>
				<verse number="14">ಯೆಹೋವ ದೇವರ ತೇಜಸ್ಸಿನಿಂದ ವ್ಯಾಪಿಸಿದ್ದ ಆ ಮೋಡವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲಾರದೆ ಹೋದರು.</verse>
			</chapter>
			<chapter number="6">
				<verse number="1">ಆಗ ಸೊಲೊಮೋನನು, “ಯೆಹೋವ ದೇವರೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀರಿ;</verse>
				<verse number="2">ಆದರೆ ನಾನು ನಿಮಗೋಸ್ಕರ ಭವ್ಯವಾದ ಮಂದಿರವನ್ನು ಕಟ್ಟಿಸಿದ್ದೇನೆ, ಅದು ನಿಮಗೆ ಶಾಶ್ವತವಾದ ವಾಸಸ್ಥಳವಾಗಿರಲಿ,” ಎಂದನು.</verse>
				<verse number="3">ಅರಸನು ಜನರ ಕಡೆ ತಿರುಗಿಕೊಂಡು, ಎದ್ದುನಿಂತಿದ್ದ ಇಸ್ರಾಯೇಲ್ ಜನರನ್ನೆಲ್ಲಾ ಆಶೀರ್ವದಿಸಿದನು.</verse>
				<verse number="4">ನಂತರ ಅರಸನು ಹೀಗೆ ಹೇಳಿದನು: “ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ಅವರು ನನ್ನ ತಂದೆಯಾದ ದಾವೀದನಿಗೆ ತಮ್ಮ ಬಾಯಿಂದ ವಾಗ್ದಾನ ಮಾಡಿದ್ದನ್ನು, ತಮ್ಮ ಕೈಗಳಿಂದಲೇ ನೆರವೇರಿಸಿದರು.</verse>
				<verse number="5">ದೇವರು ತಮ್ಮ ಬಾಯಿಂದ, ‘ನನ್ನ ಜನರಾದ ಇಸ್ರಾಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು, ನನ್ನ ನಾಮವು ಅದರಲ್ಲಿರುವ ಹಾಗೆ ಆಲಯವನ್ನು ಕಟ್ಟುವುದಕ್ಕೆ, ಇಸ್ರಾಯೇಲಿನ ಸಮಸ್ತ ಗೋತ್ರಗಳೊಳಗಿಂದ ಪಟ್ಟಣವನ್ನು ಆರಿಸಿಕೊಳ್ಳಲಿಲ್ಲ. ನನ್ನ ಜನರಾದ ಇಸ್ರಾಯೇಲರ ಮೇಲೆ ಆಳುವವನಾಗಿರಲು ನಾನು ಒಬ್ಬನನ್ನಾದರೂ ಆಯ್ದುಕೊಳ್ಳಲಿಲ್ಲ.</verse>
				<verse number="6">ಆದರೆ ನನ್ನ ಹೆಸರು ಅಲ್ಲಿ ಇರುವಂತೆ ಯೆರೂಸಲೇಮನ್ನೂ, ಇಸ್ರಾಯೇಲರನ್ನು ಆಳುವುದಕ್ಕೆ ನಾನು ದಾವೀದನನ್ನೂ ಆರಿಸಿಕೊಂಡಿದ್ದೇನೆ,’ ಎಂದು ಹೇಳಿದ್ದರು.</verse>
				<verse number="7">“ಆದಕಾರಣ ನನ್ನ ತಂದೆ ದಾವೀದನು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದಾಗ,</verse>
				<verse number="8">ಯೆಹೋವ ದೇವರು ಆತನಿಗೆ, ‘ನೀನು ನನ್ನ ಹೆಸರಿಗೋಸ್ಕರ ಒಂದು ಆಲಯವನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೇದೇ ಸರಿ.</verse>
				<verse number="9">ಆದರೆ ನೀನು ಆಲಯವನ್ನು ಕಟ್ಟಬಾರದು. ನಿನ್ನಿಂದ ಹುಟ್ಟುವ ಮಗನೇ, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕು,’ ಎಂದು ಹೇಳಿದರು.</verse>
				<verse number="10">“ಈಗ ಯೆಹೋವ ದೇವರು ತಾವು ಹೇಳಿದ ವಾಗ್ದಾನವನ್ನು ನೆರವೇರಿಸಿದ್ದಾರೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ, ಯೆಹೋವ ದೇವರು ಮಾತುಕೊಟ್ಟ ಪ್ರಕಾರ ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿಸಿದ್ದೇನೆ.</verse>
				<verse number="11">ಯೆಹೋವ ದೇವರು ಇಸ್ರಾಯೇಲರ ಸಂಗಡ ಮಾಡಿದ ಒಡಂಬಡಿಕೆಯು ಇರುವ ಮಂಜೂಷವನ್ನು ಅದರಲ್ಲಿ ಇಟ್ಟಿದ್ದೇನೆ,” ಎಂದನು.</verse>
				<verse number="12">ಆಗ ಸೊಲೊಮೋನನು ಇಸ್ರಾಯೇಲಿನ ಸಮಸ್ತ ಸಮೂಹದವರ ಸಮ್ಮುಖದಲ್ಲಿ ಯೆಹೋವ ದೇವರ ಬಲಿಪೀಠದ ಮುಂದೆ ನಿಂತು, ಪ್ರಾರ್ಥನೆಗಾಗಿ ತನ್ನ ಕೈಗಳನ್ನು ಚಾಚಿದನು.</verse>
				<verse number="13">ಸೊಲೊಮೋನನು ಸುಮಾರು ಎರಡೂವರೆ ಮೀಟರ್ ಉದ್ದ, ಎರಡೂವರೆ ಮೀಟರ್ ಅಗಲ, ಒಂದೂವರೆ ಮೀಟರ್ ಎತ್ತರವಾಗಿರುವ ಒಂದು ಕಂಚಿನ ಪೀಠವನ್ನು ಮಾಡಿಸಿ, ಅಂಗಳದ ಮಧ್ಯದಲ್ಲಿಡಿಸಿದನು. ತಾನು ಅದರ ಮೇಲೆ ನಿಂತು ಇಸ್ರಾಯೇಲಿನ ಸಮಸ್ತ ಸಮೂಹದವರ ಸಮ್ಮುಖದಲ್ಲಿ ಮೊಣಕಾಲೂರಿ ಆಕಾಶದೆಡೆಗೆ ತನ್ನ ಕೈಗಳನ್ನು ಚಾಚಿ,</verse>
				<verse number="14">ಹೀಗೆ ಪ್ರಾರ್ಥಿಸಿದನು. “ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ಆಕಾಶದಲ್ಲಾದರೂ, ಭೂಮಿಯಲ್ಲಾದರೂ ನಿಮ್ಮ ಹಾಗೆ ದೇವರು ಯಾರೂ ಇಲ್ಲ. ಸಂಪೂರ್ಣ ಹೃದಯದಿಂದ ನಿಮಗೆ ನಡೆದುಕೊಳ್ಳುವಂಥ ಸೇವಕರ ಬಗ್ಗೆ ನೀವು ನಿಮ್ಮ ಒಡಂಬಡಿಕೆಯನ್ನು ನೆರವೇರಿಸಿ ಕೃಪೆಯನ್ನು ತೋರಿಸಿದ್ದೀರಿ.</verse>
				<verse number="15">ನಿಮ್ಮ ಸೇವಕನಾದಂಥ ನನ್ನ ತಂದೆಯಾದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿ, ನೀವು ನಿಮ್ಮ ಬಾಯಿಂದ ಹೇಳಿದ್ದನ್ನು ಇಂದು ಈಡೇರಿಸಿದ್ದೀರಿ.</verse>
				<verse number="16">“ಆದಕಾರಣ, ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ‘ನಿಮ್ಮ ಸಂತಾನದವರು, ನಿನ್ನಂತೆ ಜಾಗ್ರತೆಯಾಗಿದ್ದು, ನನ್ನ ನಿಯಮದ ಪ್ರಕಾರ ನಡೆದುಕೊಳ್ಳುವದಾದರೆ, ಅವರು ತಪ್ಪದೆ ಇಸ್ರಾಯೇಲಿನ ಸಿಂಹಾಸನದ ಮೇಲೆ ನನ್ನ ಸಮ್ಮುಖದಲ್ಲಿ ಕುಳಿತುಕೊಳ್ಳುವರು,’ ಎಂದು ನೀವು ನನ್ನ ತಂದೆಯಾದ ನಿಮ್ಮ ಸೇವಕನಾದ ದಾವೀದನಿಗೆ ವಾಗ್ದಾನ ಮಾಡಿದ್ದನ್ನು ನೆರವೇರಿಸಿರಿ.</verse>
				<verse number="17">ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನಿಮ್ಮ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ನೆರವೇರಲಿ.</verse>
				<verse number="18">“ಆದರೆ ದೇವರು ನಿಜವಾಗಿ ಭೂಮಿಯ ಮೇಲೆ ಮನುಷ್ಯರ ಸಂಗಡ ವಾಸವಾಗಿರುವರೋ? ಇಗೋ, ಆಕಾಶವೂ, ಉನ್ನತೋನ್ನತ ಆಕಾಶವೂ ನಿಮಗೆ ಸಾಲದು. ಹಾಗಾದರೆ, ನಾನು ಕಟ್ಟಿಸಿದ ಈ ಆಲಯವು ನಿಮಗೆ ಸಾಲುವುದು ಹೇಗೆ?</verse>
				<verse number="19">ಆದರೂ ನನ್ನ ದೇವರಾದ ಯೆಹೋವ ದೇವರೇ, ನಿಮ್ಮ ಸೇವಕನ ಪ್ರಾರ್ಥನೆಗೂ, ಅವನ ವಿಜ್ಞಾಪನೆಗೂ ತಿರುಗಿಕೊಂಡು, ನಿಮ್ಮ ಸೇವಕನು ನಿಮ್ಮ ಮುಂದೆ ಪ್ರಾರ್ಥಿಸುವ ಪ್ರಾರ್ಥನೆಯ ಕೂಗನ್ನು ಕೇಳಿರಿ.</verse>
				<verse number="20">ನಿಮ್ಮ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀವು ಕೇಳುವಂತೆ, ‘ಇಲ್ಲಿ ನನ್ನ ನಾಮಪ್ರಭಾವ ಇರುವುದು,’ ಎಂದು ನೀವು ಹೇಳಿದ ಈ ಆಲಯದ ಮೇಲೆ ರಾತ್ರಿ ಹಗಲೂ ನಿಮ್ಮ ಕಟಾಕ್ಷವಿರಲಿ.</verse>
				<verse number="21">ಇದಲ್ಲದೆ ನೀವು ನಿಮ್ಮ ಸೇವಕನ ಮತ್ತು ನಿಮ್ಮ ಜನರಾದ ಇಸ್ರಾಯೇಲರ ವಿಜ್ಞಾಪನೆಯನ್ನೂ ಕೇಳಿರಿ. ಅವರು ಈ ಸ್ಥಳದ ಕಡೆಗೆ ಪ್ರಾರ್ಥಿಸುವಾಗ, ನೀವು ವಾಸಮಾಡುವ ಸ್ಥಳವಾದ ಪರಲೋಕದಿಂದ ಕೇಳಿ, ಕ್ಷಮೆಯನ್ನು ದಯಪಾಲಿಸಿರಿ.</verse>
				<verse number="22">“ತನ್ನ ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಒಬ್ಬ ವ್ಯಕ್ತಿ, ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ, ಅಂಥವನು ಈ ಆಲಯಕ್ಕೆ ಬಂದು, ನಿಮ್ಮ ಪೀಠದ ಮುಂದೆ ನಿಂತು ಪ್ರಮಾಣಮಾಡಿದರೆ,</verse>
				<verse number="23">ನೀವೇ ಆ ಅಪರಾಧಿಯನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿರಿ. ನಿರ್ದೋಷಿಯಾಗಿದ್ದರೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡುವ ಹಾಗೆ ಪರಲೋಕದಲ್ಲಿರುವ ನೀವು ಅದನ್ನು ಕೇಳಿ, ನಿಮ್ಮ ಸೇವಕರ ನ್ಯಾಯವನ್ನು ತೀರಿಸಿರಿ.</verse>
				<verse number="24">“ನಿಮ್ಮ ಜನರಾದ ಇಸ್ರಾಯೇಲರು ನಿಮಗೆ ವಿರೋಧವಾಗಿ ಪಾಪಮಾಡಿದ್ದರಿಂದ, ತಮ್ಮ ಶತ್ರುವಿನ ಮುಂದೆ ಪರಾಭವಗೊಂಡು, ನಿಮ್ಮ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ, ಈ ಆಲಯಕ್ಕೆ ಬಂದು, ನಿಮ್ಮ ಸನ್ನಿಧಿಯಲ್ಲಿ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡಿದರೆ,</verse>
				<verse number="25">ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಜನರಾದ ಇಸ್ರಾಯೇಲರ ಪಾಪವನ್ನು ಮನ್ನಿಸಿ, ನೀವು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡಿರಿ.</verse>
				<verse number="26">“ಅವರು ನಿಮಗೆ ವಿರೋಧವಾಗಿ ಪಾಪವನ್ನು ಮಾಡಿದ್ದರಿಂದ, ನೀವು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ ಅವರನ್ನು ಕುಂದಿಸಿದಾಗ ಅವರು ತಮ್ಮ ಪಾಪವನ್ನು ಬಿಟ್ಟು ಈ ಸ್ಥಳದ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ ಪ್ರಾರ್ಥಿಸಿದರೆ,</verse>
				<verse number="27">ಆಗ ನೀವು ಪರಲೋಕದಿಂದ ಕೇಳಿ, ನಿಮ್ಮ ಸೇವಕರಾದ ಇಸ್ರಾಯೇಲ್ ಜನರ ಪಾಪವನ್ನು ಮನ್ನಿಸಿ, ಅವರು ನಡೆಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸಿ, ನಿಮ್ಮ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡಿರಿ.</verse>
				<verse number="28">“ದೇಶದಲ್ಲಿ ಬರಗಾಲ, ಘೋರವ್ಯಾಧಿ, ಉರಿಗಾಳಿ, ಬೆಳೆಗಳ ಮೇಲೆ ಮಿಡತೆ, ಕಂಬಳಿಹುಳು ಇವುಗಳು ಇದ್ದರೆ, ಅಥವಾ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ, ಯಾವ ಬಾಧೆ ಯಾವ ಬೇನೆ ಇದ್ದರೂ,</verse>
				<verse number="29">ನಿಮ್ಮ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಒಬ್ಬ ಮನುಷ್ಯನಾದರೂ ತಾನು ಅನುಭವಿಸುತ್ತಿರುವ ಉಪದ್ರವ ದುಃಖಗಳ ನಿಮಿತ್ತವಾಗಿ ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿ, ಯಾವ ಪ್ರಾರ್ಥನೆಯನ್ನಾದರೂ, ವಿಜ್ಞಾಪನೆಯನ್ನಾದರೂ ಮಾಡಿದರೆ,</verse>
				<verse number="30">ನೀವು ವಾಸಮಾಡುವ ಪರಲೋಕದಿಂದ ಕೇಳಿ ಮನ್ನಿಸಿ, ಮನುಷ್ಯನ ಹೃದಯವನ್ನು ತಿಳಿದಿರುವ ನೀವು ಪ್ರತಿ ಮನುಷ್ಯನಿಗೂ ಅವನವನ ಮಾರ್ಗದ ಪ್ರಕಾರ ಪ್ರತಿಫಲಕೊಡಿರಿ. ಏಕೆಂದರೆ ನೀವೊಬ್ಬರೇ ಸಮಸ್ತ ಜನರ ಹೃದಯಗಳನ್ನು ತಿಳಿದವರಾಗಿದ್ದೀರಿ.</verse>
				<verse number="31">ಆಗ ನೀವು ನಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ನಿಮ್ಮ ಮಾರ್ಗಗಳಲ್ಲಿ ನಡೆಯುವರು.</verse>
				<verse number="32">“ನಿಮ್ಮ ಜನರಾದ ಇಸ್ರಾಯೇಲಿನವನಲ್ಲದೆ ನಿಮ್ಮ ಮಹಾನಾಮದ ನಿಮಿತ್ತ ದೂರದೇಶದಿಂದ ಬಂದ ಒಬ್ಬ ಪರದೇಶಿಯು, ನಿಮ್ಮ ಬಲವಾದ ಕೈ, ನಿಮ್ಮ ಚಾಚಿದ ತೋಳು ಇವುಗಳ ಕುರಿತು ಕೇಳಿ, ಅವರು ಈ ಆಲಯದ ಕಡೆಗೆ ಬಂದು ಪ್ರಾರ್ಥನೆಮಾಡಿದರೆ,</verse>
				<verse number="33">ನೀವು ವಾಸಮಾಡುವ ಪರಲೋಕದಿಂದ ಕೇಳಿ, ಪರದೇಶಿಯು ಕೇಳಿದ್ದೆಲ್ಲವನ್ನು ನೆರವೇರಿಸಿರಿ. ಆಗ ಭೂಲೋಕದ ಎಲ್ಲಾ ಜನರೂ ನಿಮ್ಮ ನಾಮವನ್ನು ತಿಳಿದು, ನಿಮ್ಮ ಜನರಾದ ಇಸ್ರಾಯೇಲರಂತೆ ನಿಮಗೆ ಭಯಭಕ್ತಿಯುಳ್ಳವರಾಗಿ, ನಾನು ಕಟ್ಟಿಸಿದ ಈ ಆಲಯವು ನಿಮ್ಮ ಹೆಸರಿನಿಂದ ಕರೆಯಲಾಗಿದೆ ಎಂದು ತಿಳಿದುಕೊಳ್ಳುವರು.</verse>
				<verse number="34">“ನೀವು ನಿಮ್ಮ ಜನರನ್ನು ತಮ್ಮ ಶತ್ರುಗಳ ಸಂಗಡ ಯುದ್ಧಮಾಡುವದಕ್ಕೆ ಎಲ್ಲಿಗಾದರೂ ಕಳುಹಿಸಿದಾಗ, ಅವರು ಅಲ್ಲಿಂದ ನೀವು ಆಯ್ದುಕೊಂಡ ಪಟ್ಟಣದ ಕಡೆಗೂ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ಅವರು ನಿಮಗೆ ಪ್ರಾರ್ಥನೆಮಾಡಿದರೆ,</verse>
				<verse number="35">ಆಗ ನೀವು ಪರಲೋಕದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ, ಅವರಿಗೆ ನ್ಯಾಯವನ್ನು ತೀರಿಸಿರಿ.</verse>
				<verse number="36">“ಪಾಪ ಮಾಡದವನು ಯಾವನೂ ಇಲ್ಲವಲ್ಲಾ. ಆದ್ದರಿಂದ ಅವರು ನಿಮಗೆ ವಿರೋಧವಾಗಿ ಪಾಪಮಾಡಲು, ನೀವು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ, ಸಮೀಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಹೋಗುವಂತೆ ನೀವು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ,</verse>
				<verse number="37">ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಮಾನಸಾಂತರಪಟ್ಟು, ‘ನಾವು ಪಾಪಮಾಡಿದ್ದೇವೆ, ತಪ್ಪುಮಾಡಿ ದುಷ್ಟರಾಗಿ ನಡೆದಿದ್ದೇವೆ,’ ಎಂದು ಅವರನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿಮಗೆ ಪ್ರಾರ್ಥನೆಮಾಡಿ,</verse>
				<verse number="38">ತಮ್ಮ ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನಿಮ್ಮ ಕಡೆಗೆ ತಿರುಗಿಕೊಂಡು, ನೀವು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಕಡೆಗೂ, ನೀವು ಆಯ್ದುಕೊಂಡ ಪಟ್ಟಣದ ಕಡೆಗೂ ನಿಮ್ಮ ನಾಮಕ್ಕೋಸ್ಕರ ನಾನು ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ಅವರು ನಿಮಗೆ ಪ್ರಾರ್ಥನೆಮಾಡಿದರೆ,</verse>
				<verse number="39">ಆಗ ನೀವು ವಾಸಮಾಡುವ ಪರಲೋಕದಿಂದ ಅವರ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿ ಅವರ ನ್ಯಾಯವನ್ನು ತೀರಿಸಿರಿ, ನಿಮ್ಮ ಜನರು ನಿಮಗೆ ವಿರೋಧವಾಗಿ ಮಾಡಿದ ಪಾಪಗಳನ್ನು ಕ್ಷಮಿಸಿರಿ.</verse>
				<verse number="40">“ಈಗ ನನ್ನ ದೇವರೇ, ಈ ಸ್ಥಳದಲ್ಲಿ ಮಾಡಿದ ಪ್ರಾರ್ಥನೆಗೆ ನಿಮ್ಮ ಕಣ್ಣುಗಳು ತೆರೆದಿರಲಿ. ನಿಮ್ಮ ಕಿವಿಗಳು ಆಲಿಸುತ್ತಾ ಇರಲಿ.</verse>
				<verse number="41">“ಈಗ ದೇವರಾದ ಯೆಹೋವ ದೇವರೇ, ಎದ್ದು ನಿಮ್ಮ ವಿಶ್ರಾಂತಿಯ ಸ್ಥಳಕ್ಕೆ ಬನ್ನಿರಿ; ನೀವೂ, ನಿಮ್ಮ ಶಕ್ತಿಯುತ ಮಂಜೂಷವೂ ಬರಲಿ. ಯೆಹೋವ ದೇವರೇ, ನಿಮ್ಮ ಯಾಜಕರು ರಕ್ಷಣೆಯೆಂಬ ವಸ್ತ್ರವನ್ನು ಧರಿಸಿಕೊಳ್ಳಲಿ. ನಿಮ್ಮ ಭಕ್ತರು ಒಳ್ಳೆಯದರಲ್ಲಿ ಸಂತೋಷಪಡಲಿ.</verse>
				<verse number="42">ಯೆಹೋವ ದೇವರೇ, ನಿಮ್ಮ ಅಭಿಷಿಕ್ತನನ್ನು ತಿರಸ್ಕರಿಸಬೇಡಿರಿ. ನಿಮ್ಮ ಸೇವಕನಾದ ದಾವೀದನಿಗೆ ವಾಗ್ದಾನಮಾಡಿದ ಮಹಾ ಪ್ರೀತಿಯನ್ನು ನೆನಪುಮಾಡಿಕೊಳ್ಳಿರಿ,” ಎಂದು ಬೇಡಿಕೊಂಡನು.</verse>
			</chapter>
			<chapter number="7">
				<verse number="1">ಸೊಲೊಮೋನನು ತನ್ನ ಪ್ರಾರ್ಥನೆಯನ್ನು ಮುಗಿಸಿದ ಕೂಡಲೆ, ಬೆಂಕಿಯು ಆಕಾಶದಿಂದ ಇಳಿದು ದಹನಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು. ಯೆಹೋವ ದೇವರ ಮಹಿಮೆಯು ಆಲಯವನ್ನು ತುಂಬಿತು.</verse>
				<verse number="2">ಯೆಹೋವ ದೇವರ ಮಹಿಮೆಯು ಆಲಯವನ್ನು ತುಂಬಿದ್ದರಿಂದ ಯಾಜಕರು ಆಲಯದಲ್ಲಿ ಹೋಗಲಾರದೆ ಇದ್ದರು.</verse>
				<verse number="3">ಇಸ್ರಾಯೇಲರೆಲ್ಲರೂ ಬೆಂಕಿಯು ಇಳಿದದ್ದನ್ನೂ, ಆಲಯದ ಮೇಲೆ ಇರುವ ಯೆಹೋವ ದೇವರ ಮಹಿಮೆಯನ್ನೂ ಕಂಡಾಗ, ಅವರು ನೆಲಕ್ಕೆ ತಮ್ಮ ಮುಖಗಳನ್ನು ಬಾಗಿ, ನೆಲಗಟ್ಟಿನ ಮೇಲೆ ಮೊಣಕಾಲೂರಿ ಆರಾಧಿಸುತ್ತಾ, ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ಯೆಹೋವ ದೇವರು ಒಳ್ಳೆಯವರು, ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.”</verse>
				<verse number="4">ಆಗ ಅರಸನೂ, ಸಮಸ್ತ ಜನರೂ ಯೆಹೋವ ದೇವರ ಮುಂದೆ ಬಲಿಗಳನ್ನು ಅರ್ಪಿಸಿದರು.</verse>
				<verse number="5">ಅರಸನಾದ ಸೊಲೊಮೋನನು 22,000 ಹೋರಿಗಳನ್ನೂ, 1,20,000 ಕುರಿಗಳನ್ನೂ ಬಲಿಯಾಗಿ ಅರ್ಪಿಸಿದನು. ಹೀಗೆಯೇ ಅರಸನೂ, ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆ ಮಾಡಿದರು.</verse>
				<verse number="6">ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಂತರು. ಹಾಗೆಯೇ ಲೇವಿಯರು ಯೆಹೋವ ದೇವರ ಗೀತವಾದ್ಯಗಳನ್ನು ಹಿಡಿದುಕೊಂಡು ನಿಂತರು. ಅರಸನಾದ ದಾವೀದನು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಇವುಗಳನ್ನು ಮಾಡಿಸಿದ್ದನು. “ಯೆಹೋವ ದೇವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಲೇವಿಯರ ಮುಂದೆ ನಿಂತು ತುತೂರಿಗಳನ್ನು ಊದುತ್ತಿದ್ದರು. ಸಮಸ್ತ ಇಸ್ರಾಯೇಲರೂ ನಿಂತಿದ್ದರು.</verse>
				<verse number="7">ಸೊಲೊಮೋನನು ಮಾಡಿಸಿದ ಕಂಚಿನ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಯ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಸೊಲೊಮೋನನು ಯೆಹೋವ ದೇವರ ಆಲಯದ ಮುಂದಿರುವ ಮಧ್ಯದ ಅಂಗಳವನ್ನು ಪ್ರತಿಷ್ಠೆಮಾಡಿ, ಅಲ್ಲಿ ಅವನು ದಹನಬಲಿಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.</verse>
				<verse number="8">ಅದೇ ಕಾಲದಲ್ಲಿ ಸೊಲೊಮೋನನೂ, ಅವನ ಸಂಗಡ ಲೆಬೊ ಹಮಾತಿನ ಪ್ರದೇಶ ಮೊದಲುಗೊಂಡು ಈಜಿಪ್ಟಿನ ನದಿಯವರೆಗೆ ಇರುವ ಮಹಾ ಜನಾಂಗವಾಗಿ ಕೂಡಿಬಂದಿದ್ದ ಸಮಸ್ತ ಇಸ್ರಾಯೇಲರೂ ಅವನ ಸಂಗಡ ಏಳು ದಿವಸ ಹಬ್ಬವನ್ನು ಮಾಡಿದರು.</verse>
				<verse number="9">ಎಂಟನೆಯ ದಿನದಲ್ಲಿ ಪರಿಶುದ್ಧ ಸಮೂಹವನ್ನು ನಡೆಸಿದರು. ಏಕೆಂದರೆ ಏಳು ದಿವಸ ಬಲಿಪೀಠದ ಪ್ರತಿಷ್ಠೆಯನ್ನು ಮತ್ತು ಇನ್ನು ಏಳು ದಿವಸ ಹಬ್ಬವನ್ನು ಆಚರಿಸಿದರು.</verse>
				<verse number="10">ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿವಸದಲ್ಲಿ ಅವನು ಜನರಿಗೆ ಅವರವರ ಡೇರೆಗಳಿಗೆ ಹೋಗುವುದಕ್ಕೆ ಅಪ್ಪಣೆಕೊಡಲು, ಆಗ ಅವರು ಯೆಹೋವ ದೇವರು ದಾವೀದನಿಗೂ, ಸೊಲೊಮೋನನಿಗೂ, ತನ್ನ ಜನರಾದ ಇಸ್ರಾಯೇಲರಿಗೂ ಮಾಡಿದ ಉಪಕಾರದ ನಿಮಿತ್ತ ಅವರು ಹೃದಯದಲ್ಲಿ ಆನಂದಭರಿತರಾಗಿ ಸಂತೋಷಪಡುತ್ತಾ ಹೋದರು.</verse>
				<verse number="11">ಸೊಲೊಮೋನನು ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ ಕಟ್ಟಿಸಿ ತೀರಿಸಿದನು. ಅವನು ಯೆಹೋವ ದೇವರ ಆಲಯದಲ್ಲಿಯೂ, ತನ್ನ ಅರಮನೆಯಲ್ಲಿಯೂ ಮಾಡಬೇಕಾದ ತನ್ನ ಮನಸ್ಸಿನಲ್ಲಿ ಇದ್ದ ಯೋಜನೆಯನ್ನು ಈಡೇರಿಸುವಲ್ಲಿ ಯಶಸ್ವಿಯಾದನು.</verse>
				<verse number="12">ಯೆಹೋವ ದೇವರು ರಾತ್ರಿಯಲ್ಲಿ ಸೊಲೊಮೋನನಿಗೆ ಪ್ರತ್ಯಕ್ಷರಾಗಿ ಅವನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯನ್ನು ಅರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆಯ್ದುಕೊಂಡಿದ್ದೇನೆ.</verse>
				<verse number="13">“ಮಳೆಯಿಲ್ಲದಂತೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದುಬಿಡಲು ಮಿಡತೆಗಳಿಗೆ ಆಜ್ಞಾಪಿಸಿದರೂ, ಇಲ್ಲವೆ ನನ್ನ ಜನರ ಮಧ್ಯದಲ್ಲಿ ಘೋರ ವ್ಯಾಧಿಯನ್ನು ಕಳುಹಿಸಿದರೂ,</verse>
				<verse number="14">ನನ್ನ ಹೆಸರಿನಿಂದ ಕರೆಯಲಾದ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆಮಾಡಿ, ನನ್ನನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ, ಆಗ ನಾನು ಪರಲೋಕದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ, ಅವರ ದೇಶವನ್ನು ಗುಣ ಮಾಡುವೆನು.</verse>
				<verse number="15">ಈಗ ಈ ಸ್ಥಳದ ಪ್ರಾರ್ಥನೆಗೆ ನನ್ನ ಕಣ್ಣುಗಳು ತೆರೆದಿರುವುವು, ನನ್ನ ಕಿವಿಗಳು ಆಲೈಸುತ್ತಿರುವುವು.</verse>
				<verse number="16">ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ಈ ಆಲಯವನ್ನು ಆಯ್ದುಕೊಂಡು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.</verse>
				<verse number="17">“ನೀನು ನಿನ್ನ ತಂದೆಯಾದ ದಾವೀದನಂತೆ, ನಾನು ನಿನಗೆ ಆಜ್ಞಾಪಿಸಿದ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಿಷ್ಠೆಯಿಂದ ಕೈಗೊಂಡು ನಡೆದರೆ,</verse>
				<verse number="18">‘ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ನಿನಗೆ ಉತ್ತರಾಧಿಕಾರಿಯ ಕೊರತೆಯಾಗುವುದಿಲ್ಲ,’ ಎಂದು ನಾನು ನಿನ್ನ ತಂದೆ ದಾವೀದನ ಸಂಗಡ ಮಾಡಿದ ಒಡಂಬಡಿಕೆಯ ಪ್ರಕಾರ ನಿನ್ನ ರಾಜ್ಯದ ಸಿಂಹಾಸನವನ್ನು ಸ್ಥಿರಪಡಿಸುತ್ತೇನೆ.</verse>
				<verse number="19">“ಆದರೆ ನೀವು, ನಾನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ತೊರೆದುಬಿಟ್ಟು, ನನ್ನಿಂದ ದೂರಹೋಗಿ ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ,</verse>
				<verse number="20">ಆಗ ನಾನು ಇಸ್ರಾಯೇಲಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ಕಿತ್ತುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಅದನ್ನು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಆಸ್ಪದವಾಗುವಂತೆ ಮಾಡುವೆನು.</verse>
				<verse number="21">ಇದಲ್ಲದೆ ಉನ್ನತವಾಗಿರುವ ಈ ಆಲಯದ ಮಾರ್ಗವಾಗಿ ಹೋಗುವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು, ‘ಯೆಹೋವ ದೇವರು, ಈ ದೇಶಕ್ಕೂ, ಈ ಆಲಯಕ್ಕೂ ಹೀಗೆ ಏಕೆ ಮಾಡಿದರು?’ ಎಂದು ಕೇಳುವರು.</verse>
				<verse number="22">ಅದಕ್ಕೆ ಜನರು, ‘ತಮ್ಮ ತಂದೆಗಳನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು, ಅನ್ಯದೇವರುಗಳನ್ನು ಹಿಂಬಾಲಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ, ಅವರು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಾರೆಂದು ಹೇಳುವರು,’ ” ಎಂದರು.</verse>
			</chapter>
			<chapter number="8">
				<verse number="1">ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವ ದೇವರ ಆಲಯವನ್ನೂ, ತನ್ನ ಅರಮನೆಯನ್ನೂ ಕಟ್ಟಿಸಿ ತೀರಿಸಿದ ತರುವಾಯ,</verse>
				<verse number="2">ಹೀರಾಮನು ಸೊಲೊಮೋನನಿಗೆ ತಿರುಗಿ ಕೊಟ್ಟ ಪಟ್ಟಣಗಳನ್ನು ಸೊಲೊಮೋನನು ಕಟ್ಟಿಸಿ, ಇಸ್ರಾಯೇಲರನ್ನು ಅಲ್ಲಿ ನಿವಾಸವಾಗಿರುವಂತೆ ಮಾಡಿದನು.</verse>
				<verse number="3">ಸೊಲೊಮೋನನು ಹಮಾತ್ ಚೋಬವನ್ನು ವಶಪಡಿಸಿಕೊಂಡನು.</verse>
				<verse number="4">ಅವನು ಮರುಭೂಮಿಯಲ್ಲಿರುವ ತದ್ಮೋರ್ ಪಟ್ಟಣವನ್ನೂ, ಹಮಾತಿನಲ್ಲಿರುವ ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.</verse>
				<verse number="5">ಇವುಗಳಲ್ಲದೆ, ಮೇಲಿನ ಬೇತ್ ಹೋರೋನ್ ಮತ್ತು ಕೆಳಗಿನ ಬೇತ್ ಹೋರೋನ್ ಪಟ್ಟಣಗಳನ್ನು ಪುನಃ ನಿರ್ಮಿಸಿದನು. ಈ ಪಟ್ಟಣಗಳು ಬಲವಾದ ಗೋಡೆಗಳು, ಬಾಗಿಲುಗಳು ಮತ್ತು ಅಗುಳಿಗಳು ಉಳ್ಳ ಕೋಟೆ ಪಟ್ಟಣಗಳಾಗಿ ಸೊಲೊಮೋನನು ಕಟ್ಟಿಸಿದನು.</verse>
				<verse number="6">ಅಲ್ಲದೆ, ಬಾಲಾತ್ ಪಟ್ಟಣವನ್ನೂ, ಉಗ್ರಾಣದ ಪಟ್ಟಣಗಳನ್ನೂ, ತನ್ನ ರಾಹುತರಿಗೋಸ್ಕರ ಮತ್ತು ರಥಗಳಿಗೋಸ್ಕರ ಪಟ್ಟಣಗಳನ್ನೂ ಕಟ್ಟಿಸಿದನು. ಯೆರೂಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲಿಯೂ ತನಗೆ ಇಷ್ಟವಾದವುಗಳನ್ನೆಲ್ಲಾ ಕಟ್ಟಿಸಿದನು.</verse>
				<verse number="7">ಸೊಲೊಮೋನನು ಇಸ್ರಾಯೇಲರಲ್ಲದ ಅಮೋರಿಯರು, ಹಿತ್ತಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು, ಇವರಲ್ಲಿ ಉಳಿದ ಸಮಸ್ತ ಜನರನ್ನೂ</verse>
				<verse number="8">ಇಸ್ರಾಯೇಲರು ಸಂಹರಿಸದೆ ಉಳಿಸಿದ್ದ ಅವರ ಮಕ್ಕಳನ್ನೂ ಸೊಲೊಮೋನನು ಇಂದಿನವರೆಗೂ ದಾಸತ್ವಕ್ಕಾಗಿ ನೇಮಿಸಿದನು.</verse>
				<verse number="9">ಆದರೆ ಸೊಲೊಮೋನನು ತನ್ನ ಕೆಲಸಕ್ಕಾಗಿ ಇಸ್ರಾಯೇಲರನ್ನು ದಾಸರಾಗಿ ಮಾಡಲಿಲ್ಲ. ಆದರೆ ಅವರು ಯುದ್ಧಭಟರಾಗಿಯೂ, ಅಧಿಪತಿಗಳಲ್ಲಿ ಪ್ರಧಾನರಾಗಿಯೂ, ತನ್ನ ರಥಗಳ ಮೇಲೆಯೂ, ರಾಹುತರ ಮೇಲೆಯೂ ಅಧಿಪತಿಗಳಾಗಿಯೂ ಇರುವಂತೆ ಮಾಡಿದನು.</verse>
				<verse number="10">ಇವರು ಅರಸನಾದ ಸೊಲೊಮೋನನ ಅಧಿಪತಿಗಳಲ್ಲಿ ಪ್ರಧಾನರಾಗಿದ್ದರು, ಇವರು ಇನ್ನೂರೈವತ್ತು ಮಂದಿ ಆಳುಗಳ ಮೇಲೆ ಅಧಿಕಾರಿಗಳಾಗಿದ್ದರು.</verse>
				<verse number="11">ಸೊಲೊಮೋನನು, “ಯೆಹೋವ ದೇವರ ಒಡಂಬಡಿಕೆಯ ಮಂಜೂಷವಿದ್ದ ಸ್ಥಳಗಳು ಪರಿಶುದ್ಧವಾಗಿರುವುದರಿಂದ, ನನ್ನ ಹೆಂಡತಿಯು ಇಸ್ರಾಯೇಲಿನ ಅರಸನಾದ ದಾವೀದನ ಅರಮನೆಯಲ್ಲಿ ವಾಸವಾಗಿರಕೂಡದು,” ಎಂದು ಹೇಳಿ ಸೊಲೊಮೋನನು ಫರೋಹನ ಮಗಳನ್ನು ದಾವೀದನ ಪಟ್ಟಣದಲ್ಲಿರಿಸದೆ ತಾನು ಆಕೆಗೋಸ್ಕರ ಕಟ್ಟಿಸಿದ ಅರಮನೆಯಲ್ಲಿ ಅವಳನ್ನು ಇರಿಸಿದನು.</verse>
				<verse number="12">ಆಗ ಸೊಲೊಮೋನನು ದ್ವಾರಾಂಗಳದ ಮುಂದೆ ತಾನು ಕಟ್ಟಿಸಿದ ಯೆಹೋವ ದೇವರ ಬಲಿಪೀಠದ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಿದನು.</verse>
				<verse number="13">ದಿನಂಪ್ರತಿ ಮೋಶೆಯ ಆಜ್ಞೆಯ ಪ್ರಕಾರ ವಿಶ್ರಾಂತಿಯ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಯೂ ವರುಷಕ್ಕೆ ಮೂರು ಸಾರಿ ಪವಿತ್ರ ಹಬ್ಬಗಳಾದ ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ ವಾರಗಳ ಹಬ್ಬದಲ್ಲಿಯೂ ಗುಡಾರಗಳ ಹಬ್ಬದಲ್ಲಿಯೂ ಬಲಿಗಳನ್ನು ಅರ್ಪಿಸಿದನು.</verse>
				<verse number="14">ಅವನು ತನ್ನ ತಂದೆಯಾದ ದಾವೀದನ ಕ್ರಮದ ಪ್ರಕಾರ, ಅವರ ಸೇವೆಗೆ ಯಾಜಕ ವರ್ಗಗಳವರನ್ನೂ ಪ್ರತಿ ದಿವಸಕ್ಕೆ ಬೇಕಾದ ಕಾರ್ಯದ ಪ್ರಕಾರ, ಯಾಜಕರ ಮುಂದೆ ಸ್ತುತಿಸುವುದಕ್ಕೂ, ಸೇವೆ ಮಾಡುವುದಕ್ಕೂ ತಮ್ಮ ವಿಚಾರಗಳಲ್ಲಿ ಲೇವಿಯರನ್ನೂ, ಸೇವೆಯ ಬಾಗಿಲಲ್ಲಿ ತಮ್ಮ ವರ್ಗಗಳ ಸರದಿಯ ಪ್ರಕಾರವಾಗಿ ದ್ವಾರಪಾಲಕರನ್ನೂ ನೇಮಿಸಿದನು. ಏಕೆಂದರೆ ದೇವರ ಮನುಷ್ಯನಾದ ದಾವೀದನು ಹಾಗೆಯೇ ನೇಮಿಸಿದ್ದನು.</verse>
				<verse number="15">ಅವರು ಯಾವ ಕಾರ್ಯದಲ್ಲಾದರೂ, ಬೊಕ್ಕಸಗಳಲ್ಲಾದರೂ ಅರಸನು ಯಾಜಕರಿಗೂ ಲೇವಿಯರಿಗೂ ಹೇಳಿದ ಆಜ್ಞೆಯನ್ನು ಮೀರಲಿಲ್ಲ.</verse>
				<verse number="16">ಯೆಹೋವ ದೇವರ ಆಲಯದ ಅಸ್ತಿವಾರ ಹಾಕಿದ ದಿವಸದವರೆಗೂ ಅದನ್ನು ಕಟ್ಟಿಸಿ ತೀರಿಸುವವರೆಗೂ ಸೊಲೊಮೋನನ ಕೆಲಸವೆಲ್ಲಾ ಮುಗಿದು, ಯೆಹೋವ ದೇವರ ಆಲಯವು ಸಿದ್ಧವಾಯಿತು.</verse>
				<verse number="17">ಆಗ ಸೊಲೊಮೋನನು ಎದೋಮ್ ದೇಶದ ಸಮುದ್ರತೀರದ ಬಳಿಯಲ್ಲಿರುವ ಎಚ್ಯೋನ್ ಗೆಬೆರ್, ಏಲೋತ್ ಎಂಬ ಊರುಗಳಿಗೆ ಹೊರಟುಹೋದನು.</verse>
				<verse number="18">ಹೀರಾಮನು ತನ್ನ ಸೇವಕರ ಮುಖಾಂತರ ಹಡಗುಗಳನ್ನೂ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಅವನ ಬಳಿಗೆ ಕಳುಹಿಸಿದನು. ಅವರು ಸೊಲೊಮೋನನ ಸೇವಕರ ಸಂಗಡ ಓಫೀರಿಗೆ ಹೋಗಿ, ಅಲ್ಲಿಂದ ಅರಸನಾದ ಸೊಲೊಮೋನನಿಗೆ 15,000 ಕಿಲೋಗ್ರಾಂ ಬಂಗಾರವನ್ನು ತೆಗೆದುಕೊಂಡು ಬಂದರು.</verse>
			</chapter>
			<chapter number="9">
				<verse number="1">ಶೆಬದ ರಾಣಿಯು ಸೊಲೊಮೋನನ ಕೀರ್ತಿಯನ್ನು ಕೇಳಿದಾಗ, ಒಗಟುಗಳಿಂದ ಅವನನ್ನು ಪರೀಕ್ಷಿಸಲು ಬಂದಳು. ಅವಳು ಮಹಾ ಗುಂಪಿನ ಸಂಗಡ ಸುಗಂಧದ್ರವ್ಯಗಳನ್ನೂ, ಬಹಳಷ್ಟು ಬಂಗಾರವನ್ನೂ, ಅಮೂಲ್ಯವಾದ ರತ್ನಗಳನ್ನೂ ಹೊತ್ತುಕೊಂಡಿರುವ ಒಂಟೆಗಳ ಸಂಗಡ ಯೆರೂಸಲೇಮಿಗೆ ಬಂದಳು. ಅವಳು ಸೊಲೊಮೋನನ ಬಳಿಗೆ ಬಂದ ಮೇಲೆ, ತನ್ನ ಹೃದಯದಲ್ಲಿದ್ದ ಎಲ್ಲವನ್ನು ಕುರಿತು ಅವನ ಸಂಗಡ ಮಾತನಾಡಿದಳು.</verse>
				<verse number="2">ಆಗ ಸೊಲೊಮೋನನು ಅವಳ ಪ್ರಶ್ನೆಗಳಿಗೆಲ್ಲಾ ಉತ್ತರಿಸಿದನು, ಅವುಗಳಲ್ಲಿ ಅವನಿಗೆ ತಿಳಿಯದಂಥದ್ದು ಒಂದೂ ಇರಲಿಲ್ಲವಾದ್ದರಿಂದ ಎಲ್ಲವುಗಳಿಗೂ ಉತ್ತರಿಸಿದನು.</verse>
				<verse number="3">ಶೆಬದ ರಾಣಿಯು ಸೊಲೊಮೋನನ ಜ್ಞಾನವನ್ನೂ, ಅವನು ಕಟ್ಟಿಸಿದ ಅರಮನೆಯನ್ನೂ,</verse>
				<verse number="4">ಅವನ ಮೇಜಿನ ಭೋಜನವನ್ನೂ, ಅವನ ಅಧಿಪತಿಗಳು ಕುಳಿತಿರುವ ರೀತಿಯನ್ನೂ, ಅವನ ಸೇವಕರು ನಿಂತಿರುವುದನ್ನೂ, ಅವರ ವಸ್ತ್ರಗಳನ್ನೂ, ಅವನ ಪಾನದಾಯಕರನ್ನೂ ಅವರ ವಸ್ತ್ರಗಳನ್ನೂ, ಅವನು ಯೆಹೋವ ದೇವರ ಆಲಯದಲ್ಲಿ ಅರ್ಪಿಸಿದ ದಹನಬಲಿಗಳನ್ನೂ ಕಂಡಾಗ ಅವಳು ವಿಸ್ಮಯಗೊಂಡಳು.</verse>
				<verse number="5">ಅವಳು ಅರಸನಿಗೆ, “ನಾನು ನನ್ನ ದೇಶದಲ್ಲಿ ನಿನ್ನ ಸಾಧನೆಗಳ ಕುರಿತೂ, ನಿನ್ನ ಜ್ಞಾನವನ್ನು ಕುರಿತೂ ಕೇಳಿದ ಮಾತು ಸತ್ಯ.</verse>
				<verse number="6">ಆದರೆ ನಾನು ಬಂದು ನನ್ನ ಕಣ್ಣುಗಳಿಂದ ನೋಡುವವರೆಗೂ ಜನರ ಮಾತುಗಳನ್ನು ನಂಬದೆ ಹೋದೆನು. ಜನರು ನನಗೆ ನಿನ್ನ ಮಹಾಜ್ಞಾನದಲ್ಲಿ ಅರ್ಧವನ್ನಾದರೂ ಹೇಳಲಿಲ್ಲ. ನಾನು ಕೇಳಿದ್ದಕ್ಕಿಂತ ನಿನ್ನ ಕೀರ್ತಿ ಎಷ್ಟೋ ಅಧಿಕವಾಗಿದೆ.</verse>
				<verse number="7">ನಿನ್ನ ಜನರು ಭಾಗ್ಯವಂತರು. ನಿನ್ನ ಮುಂದೆ ಯಾವಾಗಲೂ ನಿಂತು ನಿನ್ನ ಜ್ಞಾನವನ್ನು ಕೇಳುವ ಈ ನಿನ್ನ ಅಧಿಪತಿಗಳು ಭಾಗ್ಯವಂತರು.</verse>
				<verse number="8">ನಿನ್ನ ದೇವರಾದ ಯೆಹೋವ ದೇವರಿಗೋಸ್ಕರ ಅರಸನಾಗಿರುವಂತೆ ತಮ್ಮ ಸಿಂಹಾಸನದ ಮೇಲೆ ನಿನ್ನನ್ನು ಕುಳ್ಳಿರಿಸಿದ ನಿನ್ನಲ್ಲಿ ಹರ್ಷಗೊಂಡ ನಿನ್ನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ. ನಿನ್ನ ದೇವರು ಇಸ್ರಾಯೇಲರನ್ನು ಪ್ರೀತಿಮಾಡಿದ್ದರಿಂದ ಅವರನ್ನು ಯುಗಯುಗಕ್ಕೂ ಸ್ಥಿರಗೊಳಿಸಬೇಕೆಂದಿದ್ದಾರೆ. ನ್ಯಾಯವನ್ನೂ, ನೀತಿಯನ್ನೂ ನಡೆಸಲು ಅವರು ನಿನ್ನನ್ನು ಅರಸನನ್ನಾಗಿ ಮಾಡಿದರು,” ಎಂದಳು.</verse>
				<verse number="9">ಅವಳು ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂ ತೂಕ ಬಂಗಾರವನ್ನೂ, ಬಹು ಸಮೃದ್ಧಿಯಾದ ಸುಗಂಧದ್ರವ್ಯಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ಕೊಟ್ಟಳು. ಶೆಬದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಂಥ ಸುಗಂಧದ್ರವ್ಯಗಳಿಗೆ ಬೇರೆ ಯಾವುದು ಸಮನವಾದದ್ದು ಇರಲಿಲ್ಲ.</verse>
				<verse number="10">ಹೀರಾಮನ ಸೇವಕರೂ, ಸೊಲೊಮೋನನ ಸೇವಕರೂ ಓಫೀರಿನಿಂದ ಬಂಗಾರವನ್ನೂ, ಸುಗಂಧದ ಮರಗಳನ್ನೂ, ಅಮೂಲ್ಯವಾದ ರತ್ನಗಳನ್ನೂ ತಂದರು.</verse>
				<verse number="11">ಅರಸನು ಆ ಸುಗಂಧದ ಮರಗಳಿಂದ ಯೆಹೋವ ದೇವರ ಆಲಯಕ್ಕೋಸ್ಕರವೂ, ಅರಮನೆಗೋಸ್ಕರವೂ ಸೋಪಾನಗಳನ್ನು ಮಾಡಿಸಿದನು. ಇದಲ್ಲದೆ ಅವುಗಳಿಂದ ಹಾಡುವವರಿಗೋಸ್ಕರ ಕಿನ್ನರಿಗಳನ್ನೂ ವೀಣೆಗಳನ್ನೂ ಮಾಡಿಸಿದನು. ಯೆಹೂದ ದೇಶದಲ್ಲಿ ಹಿಂದೆಂದೂ ಇಂಥವುಗಳನ್ನು ಕಂಡಿರಲಿಲ್ಲ.</verse>
				<verse number="12">ಅರಸನಾದ ಸೊಲೊಮೋನನು, ಶೆಬದ ರಾಣಿಯು ಅರಸನಿಗೆ ತಂದ ಕಾಣಿಕೆಗಳ ಪ್ರತಿಯಾಗಿ ಕೊಟ್ಟದ್ದಲ್ಲದೆ, ಅವಳು ಬಯಸಿ ಕೇಳಿದ್ದನ್ನೆಲ್ಲಾ ಅವಳಿಗೆ ಕೊಟ್ಟನು. ಅನಂತರ ಅವಳು ತನ್ನ ಸೇವಕರೊಡನೆ ತಿರುಗಿ ತಮ್ಮ ದೇಶಕ್ಕೆ ಹೋದಳು.</verse>
				<verse number="13">ಸೊಲೊಮೋನನಿಗೆ ಪ್ರತಿ ವರುಷ ಸುಮಾರು ಇಪ್ಪತ್ತಮೂರು ಸಾವಿರ ಕಿಲ್ರೊಗ್ರಾಂ ಬಂಗಾರವು ದೊರಕುತ್ತಿತ್ತು.</verse>
				<verse number="14">ಇದಲ್ಲದೆ ಸೊಲೊಮೋನನಿಗೆ ವರ್ತಕರೂ ವ್ಯಾಪಾರಸ್ಥರೂ ಅರೇಬಿಯದ ಅರಸರೂ ದೇಶದ ಅಧಿಪತಿಗಳೂ ಸಹ ಬೆಳ್ಳಿಬಂಗಾರವನ್ನು ತರುತ್ತಿದ್ದರು.</verse>
				<verse number="15">ಅರಸನಾದ ಸೊಲೊಮೋನನು ಬಂಗಾರದಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿ ಸುಮಾರು ಏಳು ಕಿಲೋಗ್ರಾಂ ತೂಕದ ಬಂಗಾರವಿತ್ತು.</verse>
				<verse number="16">ಹಾಗೆಯೇ ಬಂಗಾರದಿಂದ ಮುನ್ನೂರು ಸಣ್ಣ ಗುರಾಣಿಗಳನ್ನು ಮಾಡಿಸಿದನು. ಒಂದೊಂದು ಗುರಾಣಿಗೆ ಸುಮಾರು ಎರಡು ಕಿಲೋಗ್ರಾಂ ಬಂಗಾರ ಹಿಡಿಯಿತು. ಅರಸನು ಇವುಗಳನ್ನು ಲೆಬನೋನಿನ ಅಡವಿಯ ಮನೆಯಲ್ಲಿ ಇಟ್ಟನು.</verse>
				<verse number="17">ಅರಸನು ದಂತದಿಂದ ದೊಡ್ಡ ಸಿಂಹಾಸನವನ್ನು ಮಾಡಿಸಿ, ಅದನ್ನು ಚೊಕ್ಕ ಬಂಗಾರದಿಂದ ಹೊದಿಸಿದನು.</verse>
				<verse number="18">ಈ ಸಿಂಹಾಸನಕ್ಕೆ ಆರು ಮೆಟ್ಟಲುಗಳಿದ್ದವು. ಸಿಂಹಾಸನಕ್ಕೆ ಬಂಗಾರದ ಪಾದ ಪೀಠ ಇತ್ತು. ಕುಳಿತುಕೊಳ್ಳುವ ಆಸನದ ಎರಡು ಕಡೆಗಳಲ್ಲಿ ಕೈಗಳಿದ್ದವು, ಆ ಕೈಗಳ ಬಳಿಯಲ್ಲಿ ಎರಡು ಸಿಂಹಗಳು ನಿಂತಿದ್ದವು.</verse>
				<verse number="19">ಹನ್ನೆರಡು ಸಿಂಹಗಳು ಆರು ಮೆಟ್ಟಲುಗಳ ಮೇಲೆ ಎರಡು ಕಡೆಗಳಲ್ಲಿ ನಿಂತಿದ್ದವು. ಯಾವ ರಾಜ್ಯದಲ್ಲಿಯೂ ಅಂಥದ್ದು ಇರಲಿಲ್ಲ.</verse>
				<verse number="20">ಇದಲ್ಲದೆ ಅರಸನಾದ ಸೊಲೊಮೋನನು ಕುಡಿಯುವ ಪಾತ್ರೆಗಳೆಲ್ಲಾ ಬಂಗಾರದವುಗಳಾಗಿದ್ದವು. ಲೆಬನೋನಿನ ಅಡವಿಯ ಅರಮನೆಯ ಎಲ್ಲಾ ಸಾಮಗ್ರಿಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ದಿವಸಗಳಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ, ಆದುದರಿಂದ ಅವನಲ್ಲಿ ಬೆಳ್ಳಿಯ ವಸ್ತು ಒಂದಾದರೂ ಕಾಣಿಸಲಿಲ್ಲ.</verse>
				<verse number="21">ಅರಸನ ಹಡಗುಗಳು ಹೀರಾಮನ ಸೇವಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೆ ಒಂದು ಸಾರಿ ಬಂಗಾರ, ಬೆಳ್ಳಿ, ದಂತ, ಕೋತಿ, ನವಿಲು ಇವುಗಳನ್ನೂ ತರುತ್ತಿದ್ದವು.</verse>
				<verse number="22">ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಸಮಸ್ತ ಅರಸರಿಗಿಂತ ಮಿಗಿಲಾಗಿದ್ದನು.</verse>
				<verse number="23">ದೇವರು ಸೊಲೊಮೋನನ ಹೃದಯದಲ್ಲಿ ಕೊಟ್ಟಿದ್ದ ಜ್ಞಾನವನ್ನು ಕೇಳುವುದಕ್ಕಾಗಿ ಭೂಲೋಕದಲ್ಲಿರುವ ಸಮಸ್ತ ಅರಸರು ಅವನ ದರ್ಶನವನ್ನು ಬಯಸಿದರು.</verse>
				<verse number="24">ಅವರೆಲ್ಲರೂ ಕಾಣಿಕೆಯಾಗಿ ಬೆಳ್ಳಿಯ ಪಾತ್ರೆಗಳನ್ನೂ, ಬಂಗಾರದ ಪಾತ್ರೆಗಳನ್ನೂ, ವಸ್ತ್ರಗಳನ್ನೂ, ಆಯುಧಗಳನ್ನೂ, ಸುಗಂಧಗಳನ್ನೂ, ಕುದುರೆಗಳನ್ನೂ, ಹೇಸರಗತ್ತೆಗಳನ್ನೂ ವರುಷ ವರುಷವೂ ನೇಮಕವಾದ ಪ್ರಕಾರ ತರುತ್ತಿದ್ದರು.</verse>
				<verse number="25">ಸೊಲೊಮೋನನಿಗೆ ನಾಲ್ಕು ಸಾವಿರ ಕುದುರೆ ಲಾಯಗಳು ಮತ್ತು ರಥಗಳು ಇದ್ದವು. ಇದಲ್ಲದೆ ಹನ್ನೆರಡು ಸಾವಿರ ರಾಹುತರಿದ್ದರು. ಅವರನ್ನು ರಥಗಳ ಪಟ್ಟಣಗಳಲ್ಲಿಯೂ ಅರಸನ ಬಳಿಯಲ್ಲಿ ಯೆರೂಸಲೇಮಿನಲ್ಲಿಯೂ ಇರಿಸಿದನು.</verse>
				<verse number="26">ಅವನು ಯೂಫ್ರೇಟೀಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ದೇಶವನ್ನು ಹಿಡಿದು ಈಜಿಪ್ಟಿನ ಮೇರೆಯವರೆಗೆ ಇರುವ ಸಮಸ್ತ ಅರಸರ ಮೇಲೆ ಆಳುತ್ತಾ ಇದ್ದನು.</verse>
				<verse number="27">ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಯನ್ನು ಕಲ್ಲುಗಳಂತೆಯೂ, ದೇವದಾರು ಮರಗಳನ್ನು ತಗ್ಗಿನಲ್ಲಿರುವ ಅತ್ತಿಮರಗಳಂತೆಯೂ ಪರಿಗಣಿಸಲಾಯಿತು.</verse>
				<verse number="28">ಇದಲ್ಲದೆ ಸೊಲೊಮೋನನಿಗೆ ಈಜಿಪ್ಟಿನಿಂದಲೂ ಸಮಸ್ತ ದೇಶಗಳಿಂದಲೂ ಕುದುರೆಗಳನ್ನು ತೆಗೆದುಕೊಂಡು ಬರುತ್ತಿದ್ದರು.</verse>
				<verse number="29">ಸೊಲೊಮೋನನ ಉಳಿದ ಕ್ರಿಯೆಗಳು, ಮೊದಲನೆಯವುಗಳೂ, ಕಡೆಯವುಗಳೂ ಪ್ರವಾದಿಯಾದ ನಾತಾನನ ಪುಸ್ತಕದಲ್ಲಿಯೂ, ಶೀಲೋವಿನವನಾದ ಅಹೀಯನ ಪ್ರವಾದನೆಯಲ್ಲಿಯೂ, ದರ್ಶಿಯಾದ ಇದ್ದೋವನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ವಿರೋಧವಾಗಿ ಹೇಳಿದ ದರ್ಶನಗಳಲ್ಲಿಯೂ ಬರೆದಿರುತ್ತವೆ.</verse>
				<verse number="30">ಹೀಗೆ ಸೊಲೊಮೋನನು ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲಿನ ಮೇಲೆ ನಾಲ್ವತ್ತು ವರ್ಷಗಳು ಆಳಿದನು.</verse>
				<verse number="31">ಸೊಲೊಮೋನನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ಅವನ ತಂದೆ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ರೆಹಬ್ಬಾಮನು ಅವನಿಗೆ ಬದಲಾಗಿ ಅರಸನಾದನು.</verse>
			</chapter>
			<chapter number="10">
				<verse number="1">ರೆಹಬ್ಬಾಮನು ಶೆಕೆಮಿಗೆ ಹೋದನು; ಅವನನ್ನು ಅರಸನಾಗಿ ಮಾಡುವುದಕ್ಕೆ ಸಮಸ್ತ ಇಸ್ರಾಯೇಲರು ಶೆಕೆಮಿಗೆ ಬಂದರು.</verse>
				<verse number="2">ಅರಸನಾದ ಸೊಲೊಮೋನನ ಸಮ್ಮುಖದಿಂದ ಓಡಿಹೋಗಿ ಈಜಿಪ್ಟಿನಲ್ಲಿ ವಾಸವಾಗಿದ್ದ ನೆಬಾಟನ ಮಗ ಯಾರೊಬ್ಬಾಮನು ಇದನ್ನು ಕೇಳಿದಾಗ, ಅವನು ಈಜಿಪ್ಟಿನಿಂದ ತಿರುಗಿಬಂದನು.</verse>
				<verse number="3">ಆಗ ಯಾರೊಬ್ಬಾಮನೂ ಸಮಸ್ತ ಇಸ್ರಾಯೇಲರೂ ರೆಹಬ್ಬಾಮನ ಬಳಿಗೆ ಬಂದು ಅವನ ಸಂಗಡ ಮಾತನಾಡಿ,</verse>
				<verse number="4">“ನಿನ್ನ ತಂದೆಯು ನಮ್ಮ ನೊಗವನ್ನು ಭಾರವಾಗಿ ಮಾಡಿದನು. ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ, ಅವನು ನಮ್ಮ ಮೇಲೆ ಹಾಕಿದ ಅವನ ಭಾರವಾದ ನೊಗವನ್ನೂ ಹಗುರಮಾಡಿದರೆ, ನಾವು ನಿನಗೆ ಸೇವೆಮಾಡುತ್ತೇವೆ,” ಎಂದರು.</verse>
				<verse number="5">ಅದಕ್ಕೆ ರೆಹಬ್ಬಾಮನು ಅವರಿಗೆ, “ಮೂರು ದಿವಸಗಳಾದ ತರುವಾಯ ತಿರುಗಿ ನನ್ನ ಬಳಿಗೆ ಬನ್ನಿರಿ,” ಎಂದು ಹೇಳಿದ್ದರಿಂದ ಜನರು ಹೊರಟು ಹೋದರು.</verse>
				<verse number="6">ಆಗ ಅರಸನಾದ ರೆಹಬ್ಬಾಮನು, ತನ್ನ ತಂದೆ ಸೊಲೊಮೋನನು ಬದುಕಿರುವಾಗ, ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ ಅವರಿಗೆ, “ನಾನು ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ನಿಮ್ಮ ಆಲೋಚನೆಯೇನು?” ಎಂದು ಕೇಳಿದನು.</verse>
				<verse number="7">ಅವರು ಅವನಿಗೆ, “ನೀನು ಈ ಜನರಿಗೆ ದಯವುಳ್ಳವನಾಗಿ ಅವರನ್ನು ಮೆಚ್ಚಿಸಿ, ಒಳ್ಳೆಯ ಮಾತುಗಳಿಂದ ಅವರಿಗೆ ಉತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು,” ಎಂದು ಹೇಳಿದರು.</verse>
				<verse number="8">ಆದರೆ ರೆಹಬ್ಬಾಮನು, ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು, ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಕೇಳಿ,</verse>
				<verse number="9">ಅವನು ಅವರಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಉತ್ತರ ಕೊಡಲು ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.</verse>
				<verse number="10">ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವನಿಗೆ, “ನಿನ್ನ ತಂದೆಯು ನಮ್ಮ ನೊಗವನ್ನು ಭಾರಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ, ‘ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರುವುದು.</verse>
				<verse number="11">ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು. ಆದರೆ ನಾನು ನಿಮ್ಮ ನೊಗವನ್ನು ಇನ್ನೂ ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ, ನಾನಾದರೋ ನಿಮ್ಮನ್ನು ಚೇಳು ಕೊರಡೆಗಳಿಂದ ಶಿಕ್ಷಿಸುವೆನು,’ ಎಂದು ನೀನು ಅವರಿಗೆ ಹೇಳು,” ಎಂದರು.</verse>
				<verse number="12">ಆಗ, “ಮೂರನೆಯ ದಿವಸದಲ್ಲಿ ನನ್ನ ಬಳಿಗೆ ಬನ್ನಿರಿ” ಎಂದು ಅರಸನು ಹೇಳಿದ ಪ್ರಕಾರ ಮೂರನೆಯ ದಿವಸದಲ್ಲಿ ಯಾರೊಬ್ಬಾಮನೂ, ಸಮಸ್ತ ಜನರೂ ಅರಸನಾದ ರೆಹಬ್ಬಾಮನ ಬಳಿಗೆ ಬಂದರು.</verse>
				<verse number="13">ಆದರೆ ಅರಸನು ಜನರಿಗೆ ಕಠಿಣವಾದ ಉತ್ತರವನ್ನು ಕೊಟ್ಟು, ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ನಿರಾಕರಿಸಿ,</verse>
				<verse number="14">ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ, “ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗಿ ಮಾಡಿದನು. ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಶಿಕ್ಷಿಸಿದನು; ಆದರೆ ನಾನು ಮುಳ್ಳು ಕೊರಡೆಗಳಿಂದ ಶಿಕ್ಷಿಸುವೆನು,” ಎಂದನು.</verse>
				<verse number="15">ಅರಸನು ಜನರ ಮಾತನ್ನು ಕೇಳದೆಹೋದದ್ದು ದೇವರಿಂದಲೇ. ಹೀಗೆ ಯೆಹೋವ ದೇವರು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ಈಡೇರುವುದಕ್ಕೆ ಕಾರಣವಾಯಿತು.</verse>
				<verse number="16">ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲರು ತಿಳಿದಾಗ, ಜನರು ಅರಸನಿಗೆ ಉತ್ತರವಾಗಿ, “ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾಯೇಲರೇ, ನಿಮ್ಮ ಡೇರೆಗಳಿಗೆ ಹೋಗಿರಿ. ದಾವೀದನೇ, ಈಗ ನಿನ್ನ ಕುಟುಂಬವನ್ನು ನೀನೇ ನೋಡಿಕೋ,” ಎಂದು ಹೇಳಿ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಡೇರೆಗಳಿಗೆ ಹೋದರು.</verse>
				<verse number="17">ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲರ ಮೇಲೆ ರೆಹಬ್ಬಾಮನು ಆಳಿದನು.</verse>
				<verse number="18">ಆಗ ರೆಹಬ್ಬಾಮನು ದಾಸರ ಮೇಲ್ವಿಚಾರಕನಾದ ಅದೋನೀರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲರು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು. ಆದ್ದರಿಂದ ಅರಸನಾದ ರೆಹಬ್ಬಾಮನು ಆತುರಪಟ್ಟು ತನ್ನ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು.</verse>
				<verse number="19">ಹೀಗೆ ಇಂದಿನವರೆಗೂ ಇಸ್ರಾಯೇಲರು ದಾವೀದನ ಕುಟುಂಬದವರೊಡನೆ ವಿರೋಧವಾಗಿ ತಿರುಗಿಬೀಳುತ್ತಲೇ ಇದ್ದಾರೆ.</verse>
			</chapter>
			<chapter number="11">
				<verse number="1">ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ, ರಾಜ್ಯವನ್ನು ತಿರುಗಿ ಪಡೆಯುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು, ಯೆಹೂದ ಮತ್ತು ಬೆನ್ಯಾಮೀನವರ ಕುಟುಂಬಗಳಿಂದ 1,80,000 ಸಮರ್ಥ ಸೈನಿಕರನ್ನು ಆಯ್ದುಕೊಂಡು ಒಟ್ಟುಗೂಡಿಸಿದನು.</verse>
				<verse number="2">ಆದರೆ ಯೆಹೋವ ದೇವರ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಗಿ,</verse>
				<verse number="3">“ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ, ಯೆಹೂದ ಬೆನ್ಯಾಮೀನರಲ್ಲಿರುವ ಸಮಸ್ತ ಇಸ್ರಾಯೇಲರಿಗೂ ಹೇಳಬೇಕಾದದ್ದೇನೆಂದರೆ,</verse>
				<verse number="4">‘ನೀವು ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗಬೇಡಿರಿ. ಪ್ರತಿ ಮನುಷ್ಯನು ತನ್ನ ಮನೆಗೆ ಹಿಂದಿರುಗಲಿ. ಏಕೆಂದರೆ ಈ ಕಾರ್ಯವು ತಮ್ಮಿಂದ ಉಂಟಾಯಿತೆಂದು ಯೆಹೋವ ದೇವರು ಹೇಳುತ್ತಾರೆ,’ ” ಎಂದನು. ಆದ್ದರಿಂದ ಅವರು ಯೆಹೋವ ದೇವರ ವಾಕ್ಯವನ್ನು ಕೇಳಿ, ಯಾರೊಬ್ಬಾಮನ ಮೇಲೆ ಹೋಗದೆ ಹಿಂದಿರುಗಿ ಹೋದರು.</verse>
				<verse number="5">ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸಮಾಡಿ, ಯೆಹೂದದಲ್ಲಿ ಕೋಟೆಯುಳ್ಳ ಪಟ್ಟಣಗಳನ್ನು ಕಟ್ಟಿಸಿದನು.</verse>
				<verse number="6">ಅವನು ಬೇತ್ಲೆಹೇಮನ್ನೂ, ಏಟಾಮನ್ನೂ, ತೆಕೋವನ್ನೂ,</verse>
				<verse number="7">ಬೇತ್ ಚೂರ್ ಪಟ್ಯಣವನ್ನೂ, ಸೋಕೋನನ್ನೂ, ಅದುಲ್ಲಾಮನ್ನೂ,</verse>
				<verse number="8">ಗತ್ ಊರನ್ನೂ ಮಾರೇಷಾವನ್ನೂ ಜೀಫನ್ನೂ,</verse>
				<verse number="9">ಅದೋರೈಮನ್ನೂ, ಲಾಕೀಷನ್ನೂ, ಅಜೇಕವನ್ನೂ,</verse>
				<verse number="10">ಚೊರ್ಗವನ್ನೂ, ಅಯ್ಯಾಲೋನನ್ನೂ, ಹೆಬ್ರೋನನ್ನೂ ಕಟ್ಟಿಸಿದನು. ಇವು ಯೆಹೂದದಲ್ಲಿಯೂ, ಬೆನ್ಯಾಮೀನರಲ್ಲಿಯೂ ಕೋಟೆಯುಳ್ಳ ಪಟ್ಟಣಗಳಾಗಿವೆ.</verse>
				<verse number="11">ಇದಲ್ಲದೆ ಅವನು ಕೋಟೆಗಳನ್ನು ಬಲಪಡಿಸಿ, ಅವುಗಳಲ್ಲಿ ನಾಯಕರನ್ನೂ, ಆಹಾರ, ಎಣ್ಣೆ, ದ್ರಾಕ್ಷಾರಸ ಇರುವ ಉಗ್ರಾಣಗಳನ್ನೂ ಇಟ್ಟನು.</verse>
				<verse number="12">ಪ್ರತಿ ಪಟ್ಟಣದಲ್ಲಿ ಖೇಡ್ಯಗಳನ್ನೂ, ಈಟಿಗಳನ್ನೂ ಇಟ್ಟು ಯೆಹೂದ ಬೆನ್ಯಾಮೀನವರು ಅವನ ಕಡೆ ಇದ್ದುದರಿಂದ, ಅವುಗಳನ್ನು ಭದ್ರಪಡಿಸಿದನು.</verse>
				<verse number="13">ಸಮಸ್ತ ಇಸ್ರಾಯೇಲಿನಲ್ಲಿದ್ದ ಯಾಜಕರೂ, ಲೇವಿಯರೂ ತಮ್ಮ ಸಮಸ್ತ ಪ್ರಾಂತಗಳಿಂದ ಅವನ ಬಳಿಗೆ ಪುನಃ ಬಂದರು.</verse>
				<verse number="14">ಲೇವಿಯರು ತಮ್ಮ ಹುಲ್ಲುಗಾವಲು ಮತ್ತು ಆಸ್ತಿಯನ್ನು ತ್ಯಜಿಸಿ ಯೆಹೂದ ಮತ್ತು ಯೆರೂಸಲೇಮಿಗೆ ಬಂದರು, ಏಕೆಂದರೆ ಯಾರೊಬ್ಬಾಮನೂ ಅವನ ಮಕ್ಕಳು ಯೆಹೋವ ದೇವರಿಗೆ ಯಾಜಕ ಸೇವೆ ಮಾಡದ ಹಾಗೆ ತಿರಸ್ಕರಿಸಿದನು.</verse>
				<verse number="15">ಉನ್ನತ ಸ್ಥಳಗಳಿಗೋಸ್ಕರವೂ ದೆವ್ವಗಳಿಗೋಸ್ಕರವೂ, ಯಾರೊಬ್ಬಾಮನು ಮಾಡಿದ ಕರುಗಳ ಮೂರ್ತಿಪೂಜೆಗಾಗಿ ತಾನೇ ಯಾಜಕರನ್ನು ನೇಮಿಸಿದ್ದರಿಂದ,</verse>
				<verse number="16">ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಹುಡುಕುವ ಮನಸ್ಸು ಮಾಡಿದ ಇಸ್ರಾಯೇಲಿನ ಪ್ರತಿಯೊಂದು ಕುಲಗಳಿಂದ ಕೆಲವರು ತಮ್ಮ ಪೂರ್ವಜರ ದೇವರಾದ ಯೆಹೋವ ದೇವರಿಗೆ ಯಜ್ಞಗಳನ್ನು ಅರ್ಪಿಸಲು ಲೇವಿಯರನ್ನು ಹಿಂಬಾಲಿಸಿ ಯೆರೂಸಲೇಮಿಗೆ ಬಂದರು.</verse>
				<verse number="17">ಹೀಗೆ ಅವರು ಯೆಹೂದ ರಾಜ್ಯವನ್ನು ದೃಢಪಡಿಸಿ, ಸೊಲೊಮೋನನ ಮಗ ರೆಹಬ್ಬಾಮನನ್ನು ಮೂರು ವರ್ಷಗಳವರೆಗೂ ಬಲಪಡಿಸಿದರು. ಅವರು ಮೂರು ವರ್ಷಗಳವರೆಗೂ ದಾವೀದನ, ಸೊಲೊಮೋನನ ಮಾರ್ಗದಲ್ಲಿ ನಡೆದರು.</verse>
				<verse number="18">ರೆಹಬ್ಬಾಮನು ಮಹಲತ್ ಎಂಬಾಕೆಯನ್ನು ಮದುವೆಮಾಡಿಕೊಂಡನು. ಈ ಮಹಲತ್ ದಾವೀದನ ಮಗ ಯೆರೀಮೋತ್ ಹಾಗು ಅಬೀಹೈಲರ ಮಗಳು. ಈ ಅಬೀಹೈಲಳು ಇಷಯನ ಮೊಮ್ಮಗಳೂ, ಎಲೀಯಾಬನ ಮಗಳೂ ಆಗಿದ್ದಳು.</verse>
				<verse number="19">ಅಬೀಹಾಯಿಲಳು ಯೆಗೂಷ್, ಶೆಮರ್ಯ, ಜಹಾಮ್ ಎಂಬ ಮಕ್ಕಳನ್ನು ಅವನಿಗೆ ಹೆತ್ತಳು.</verse>
				<verse number="20">ಇವಳ ತರುವಾಯ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬವಳನ್ನು ಮದುವೆಮಾಡಿಕೊಂಡನು. ಇವಳು ಅವನಿಗೆ ಅಬೀಯನನ್ನೂ, ಅತ್ತೈಯನ್ನೂ, ಜೀಜನನ್ನೂ, ಶೆಲೋಮೀತನನ್ನೂ ಹೆತ್ತಳು.</verse>
				<verse number="21">ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ, ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಅವನು ಇಪ್ಪತ್ತೆಂಟು ಮಂದಿ ಪುತ್ರರನ್ನೂ, ಅರವತ್ತು ಮಂದಿ ಪುತ್ರಿಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿಯರಿಗಿಂತಲೂ, ಉಪಪತ್ನಿಯರಿಗಿಂತಲೂ ಅಬ್ಷಾಲೋಮನ ಮಗಳಾದ ಮಾಕ ಎಂಬವಳನ್ನು ಹೆಚ್ಚಾಗಿ ಪ್ರೀತಿಮಾಡಿದನು.</verse>
				<verse number="22">ರೆಹಬ್ಬಾಮನು ಮಾಕ ಎಂಬವಳ ಮಗನಾದ ಅಬೀಯನನ್ನು ಅವನ ಸಹೋದರರಲ್ಲಿ ಯುವರಾಜನನ್ನಾಗಿ ಮಾಡಿದನು. ಏಕೆಂದರೆ ಅವನನ್ನು ಅರಸನಾಗಿ ಮಾಡಲು ಮನಸ್ಸುಳ್ಳವನಾಗಿದ್ದನು.</verse>
				<verse number="23">ಇದಲ್ಲದೆ ಅವನು ವಿವೇಕವಾಗಿ ನಡೆದು ತನ್ನ ಎಲ್ಲಾ ಮಕ್ಕಳನ್ನು ಯೆಹೂದ ಬೆನ್ಯಾಮೀನಿನ ದೇಶಗಳಲ್ಲಿ ಇರುವ ಎಲ್ಲಾ ಬಲವಾದ ಪಟ್ಟಣಗಳಲ್ಲಿ ಚದರಿಸಿ, ಅವರಿಗೆ ಬಹಳ ದವಸಧಾನ್ಯಗಳನ್ನು ಕೊಟ್ಟನು. ಅವರಿಗೆ ಅನೇಕ ಹೆಂಡತಿಯರನ್ನು ಕೊಟ್ಟನು.</verse>
			</chapter>
			<chapter number="12">
				<verse number="1">ರೆಹಬ್ಬಾಮನು ರಾಜ್ಯವನ್ನು ಸ್ಥಿರಮಾಡಿ ತನ್ನನ್ನು ಬಲಪಡಿಸಿಕೊಂಡಾಗ, ಅವನೂ, ಅವನ ಸಂಗಡ ಸಮಸ್ತ ಇಸ್ರಾಯೇಲರೂ ಯೆಹೋವ ದೇವರ ನಿಯಮವನ್ನು ಬಿಟ್ಟುಬಿಟ್ಟರು.</verse>
				<verse number="2">ಅವರು ಯೆಹೋವ ದೇವರಿಗೆ ವಿಶ್ವಾಸದ್ರೋಹಮಾಡಿದ್ದರಿಂದ, ರೆಹಬ್ಬಾಮನು ಅರಸನಾದ ಐದನೆಯ ವರ್ಷದಲ್ಲಿ ಈಜಿಪ್ಟ್ ಅರಸನಾದ ಶೀಶಕನು ಯೆರೂಸಲೇಮಿನ ಮೇಲೆ ದಾಳಿಮಾಡಿದನು.</verse>
				<verse number="3">ಅವನ ಸಂಗಡ ಸಾವಿರದ ಇನ್ನೂರು ರಥಗಳೂ, ಅರವತ್ತು ಸಾವಿರ ರಾಹುತರೂ ಇದ್ದರು. ಇದಲ್ಲದೆ ತನ್ನ ಸಂಗಡ ಈಜಿಪ್ಟಿನಿಂದ ಬಂದ ಲಿಬಿಯದವರೂ, ಸುಕ್ಕೀಯರೂ, ಕೂಷ್ಯರೂ ಲೆಕ್ಕವಿಲ್ಲದಷ್ಟು ಬಂದರು.</verse>
				<verse number="4">ಅವನು ಯೆಹೂದಕ್ಕೆ ಇದ್ದ ಕೋಟೆಯುಳ್ಳ ಪಟ್ಟಣಗಳನ್ನು ಹಿಡಿದು ಯೆರೂಸಲೇಮಿಗೆ ಬಂದನು.</verse>
				<verse number="5">ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆ, “ನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಕೊಟ್ಟುಬಿಟ್ಟೆನೆಂದು ಯೆಹೋವ ದೇವರು ನಿಮಗೆ ಹೇಳುತ್ತಾರೆ,” ಎಂದನು.</verse>
				<verse number="6">ಆದ್ದರಿಂದ ಇಸ್ರಾಯೇಲಿನ ಪ್ರಧಾನರೂ, ಅರಸನೂ ತಮ್ಮನ್ನು ತಗ್ಗಿಸಿಕೊಂಡು, “ಯೆಹೋವ ದೇವರು ನೀತಿವಂತರು,” ಎಂದರು.</verse>
				<verse number="7">ಅವರು ತಮ್ಮನ್ನು ತಗ್ಗಿಸಿಕೊಂಡದ್ದನ್ನು ಯೆಹೋವ ದೇವರು ನೋಡಿದಾಗ, ಯೆಹೋವ ದೇವರ ವಾಕ್ಯವು ಶೆಮಾಯನಿಗೆ ಉಂಟಾಗಿ, “ಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವರನ್ನು ನಾಶಮಾಡದೆ, ಅವರು ತಪ್ಪಿಸಿಕೊಳ್ಳುವಂತೆ ಮಾಡುವೆನು. ಶೀಶಕನ ಮುಖಾಂತರ ನನ್ನ ಕೋಪವನ್ನು ಯೆರೂಸಲೇಮಿನ ಮೇಲೆ ಸುರಿದುಬಿಡುವುದಿಲ್ಲ.</verse>
				<verse number="8">ಆದರೂ ಅವರು ನನ್ನ ಸೇವೆಗೂ, ದೇಶಗಳ ಅರಸರ ಸೇವೆಗೂ ಇರುವ ವ್ಯತ್ಯಾಸವನ್ನು ಇವರು ತಿಳಿಯುವ ಹಾಗೆ ಅವನಿಗೆ ಸೇವಕರಾಗುವರು,” ಎಂದು ಹೇಳಿದನು.</verse>
				<verse number="9">ಈಜಿಪ್ಟಿನ ಅರಸನಾದ ಶೀಶಕನು ಯೆರೂಸಲೇಮಿನ ಮೇಲೆ ದಾಳಿಮಾಡಿ ಯೆಹೋವ ದೇವರ ಆಲಯ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ದೋಚಿಕೊಂಡನು, ಇದಲ್ಲದೆ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ಒಳಗೊಂಡಂತೆ ಅವನು ಸಮಸ್ತವನ್ನೂ ದೋಚಿಕೊಂಡು ಹೋದನು.</verse>
				<verse number="10">ಆದಕಾರಣ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ಪ್ರವೇಶದ್ವಾರದ ಕರ್ತವ್ಯದಲ್ಲಿದ್ದ ಕಾವಲುಗಾರರ ಅಧಿಪತಿಗಳ ಕೈಯಲ್ಲಿ ಒಪ್ಪಿಸಿದನು.</verse>
				<verse number="11">ಅರಸನು ಯೆಹೋವ ದೇವರ ಆಲಯಕ್ಕೆ ಹೋಗುವಾಗಲೆಲ್ಲಾ, ಕಾವಲುಗಾರರು ಅವುಗಳನ್ನು ಎತ್ತಿಕೊಂಡು ಬರುತ್ತಿದ್ದರು. ಅಲ್ಲಿಂದ ಹಿಂದಕ್ಕೆ ಬಂದ ನಂತರ ಕಾವಲಿನ ಚಾವಡಿಗೆ ತರುತ್ತಿದ್ದರು.</verse>
				<verse number="12">ರೆಹಬ್ಬಾಮನು ತನ್ನನ್ನು ತಗ್ಗಿಸಿಕೊಂಡಾಗ, ಯೆಹೋವ ದೇವರ ಕೋಪವು ಅವನನ್ನು ಬಿಟ್ಟು ತಿರುಗಿತು. ಆತನು ಪೂರ್ಣವಾಗಿ ನಾಶಮಾಡಲಿಲ್ಲ. ಯೆಹೂದದಲ್ಲಿ ಸಹ ಕೆಲವು ಕಾರ್ಯಗಳು ಸುಲಕ್ಷಣಗಳು ಕಂಡುಬಂದವು.</verse>
				<verse number="13">ಅರಸನಾದ ರೆಹಬ್ಬಾಮನು ಯೆರೂಸಲೇಮಿನಲ್ಲಿ ತನ್ನನ್ನು ಬಲಪಡಿಸಿಕೊಂಡು ರಾಜ್ಯವನ್ನು ಆಳಿದನು. ರೆಹಬ್ಬಾಮನು ಆಳಲು ಆರಂಭಿಸಿದಾಗ, ನಲವತ್ತೊಂದು ವರ್ಷದವನಾಗಿದ್ದು, ಅಲ್ಲಿ ಯೆಹೋವ ದೇವರು ತಮ್ಮ ಹೆಸರಿಗೋಸ್ಕರ ಇಸ್ರಾಯೇಲಿನ ಸಮಸ್ತ ಗೋತ್ರಗಳಲ್ಲಿ ಆಯ್ದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ಅವನ ತಾಯಿಯ ಹೆಸರು ನಯಮಾ.</verse>
				<verse number="14">ಅವನು ಯೆಹೋವ ದೇವರನ್ನು ಹುಡುಕಲು ತನ್ನ ಹೃದಯವನ್ನು ಸ್ಥಿರಪಡಿಸದೆ ಇದ್ದುದರಿಂದ, ಕೆಟ್ಟದ್ದನ್ನು ಮಾಡಿದನು.</verse>
				<verse number="15">ರೆಹಬ್ಬಾಮನು ಅರಸನಾಗಿದ್ದಾಗ ತನ್ನ ಆಳ್ವಿಕೆಯ ಮೊದಲಿನಿಂದ ಕಡೆಯವರೆಗೆ ಮಾಡಿದ ಕಾರ್ಯಗಳು ಪ್ರವಾದಿಯಾದ ಶೆಮಾಯನ ಪುಸ್ತಕದಲ್ಲಿಯೂ, ವಂಶಾವಳಿಗಳನ್ನು ಕುರಿತು ಬರೆದ ದರ್ಶಿಯಾದ ಇದ್ದೋವನ ಪುಸ್ತಕದಲ್ಲಿಯೂ ಬರೆದಿರುತ್ತವೆ. ಇದಲ್ಲದೆ ರೆಹಬ್ಬಾಮನಿಗೂ, ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧಗಳಾಗುತ್ತಿದ್ದವು.</verse>
				<verse number="16">ರೆಹಬ್ಬಾಮನು ಮೃತನಾಗಿ ತನ್ನ ಪಿತೃಗಳ ಬಳಿ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಅಬೀಯನು ಅವನಿಗೆ ಬದಲಾಗಿ ಅರಸನಾದನು.</verse>
			</chapter>
			<chapter number="13">
				<verse number="1">ಅರಸನಾದ ಯಾರೊಬ್ಬಾಮನ ಆಳಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಯೆಹೂದದ ಅರಸನಾಗಿ,</verse>
				<verse number="2">ಯೆರೂಸಲೇಮಿನಲ್ಲಿ ಮೂರು ವರ್ಷ ಆಳಿದನು. ಅವನ ತಾಯಿಯ ಹೆಸರು ಮೀಕಾಯ, ಇವಳು ಗಿಬೆಯದ ಉರಿಯೇಲನ ಮಗಳು. ಅಬೀಯನಿಗೂ, ಯಾರೊಬ್ಬಾಮನಿಗೂ ಯುದ್ಧ ಉಂಟಾಗಿತ್ತು.</verse>
				<verse number="3">ಆಗ ಅಬೀಯನು ಯುದ್ಧಭಟರಾದ ಪರಾಕ್ರಮಶಾಲಿಗಳ ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡಿದನು. ಆಯ್ಕೆಯಾದ ನಾಲ್ಕು ಲಕ್ಷ ಜನರಿದ್ದರು. ಯಾರೊಬ್ಬಾಮನು ಅವನಿಗೆ ಎದುರಾಗಿ ಎಂಟು ಲಕ್ಷಮಂದಿ ಆಯ್ಕೆಯಾದ ಪರಾಕ್ರಮಶಾಲಿಗಳನ್ನು ಯುದ್ಧಕ್ಕೆ ನಿಲ್ಲಿಸಿದನು.</verse>
				<verse number="4">ಆಗ ಅಬೀಯನು ಎಫ್ರಾಯೀಮ್ ಬೆಟ್ಟದಲ್ಲಿರುವ ಚೆಮಾರಯಿಮ್ ಎಂಬ ಬೆಟ್ಟದ ಮೇಲೆ ನಿಂತು, “ಯಾರೊಬ್ಬಾಮನೇ, ಸಮಸ್ತ ಇಸ್ರಾಯೇಲರೇ, ನನ್ನ ಮಾತು ಕೇಳಿರಿ.</verse>
				<verse number="5">ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀದನಿಗೂ, ಅವನ ವಂಶದವರಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟರೆಂದು ನಿಮಗೆ ಗೊತ್ತಿಲ್ಲವೋ.</verse>
				<verse number="6">ಆದರೆ ದಾವೀದನ ಮಗ ಸೊಲೊಮೋನನ ಸೇವಕನಾಗಿದ್ದ ನೆಬಾಟನ ಮಗ ಯಾರೊಬ್ಬಾಮನು ತನ್ನ ಯಜಮಾನನ ಮೇಲೆ ತಿರುಗಿಬಿದ್ದನು.</verse>
				<verse number="7">ಇದಲ್ಲದೆ ನಿಷ್ಪ್ರಯೋಜಕರಾದ ದುಷ್ಟರು ಅವನ ಬಳಿಗೆ ಕೂಡಿಬಂದು, ಸೊಲೊಮೋನನ ಮಗ ರೆಹಬ್ಬಾಮನು ಎಳೆಯ ಪ್ರಾಯದವನೂ, ನಿರ್ಣಯಿಸಲಾಗದವನೂ ಅವರನ್ನು ಎದುರಿಸಲು ಬಲವಿಲ್ಲದವನೂ ಆಗಿರುವುದರಿಂದ ಅವನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡರು.</verse>
				<verse number="8">“ಈಗ ದಾವೀದನ ವಂಶಜರ ಕೈಯಲ್ಲಿರುವ ಯೆಹೋವ ದೇವರ ರಾಜ್ಯವನ್ನು ಎದುರಿಸುತ್ತೇವೆಂದು ನೀವು ಹೇಳಿಕೊಳ್ಳುತ್ತೀರಿ. ಇದಲ್ಲದೆ ನೀವು ಬಹು ಗುಂಪಾಗಿದ್ದೀರಿ. ಯಾರೊಬ್ಬಾಮನು ದೇವರುಗಳಾಗಿ ನಿಮಗೆ ಮಾಡಿದ ಬಂಗಾರದ ಕರುಗಳು ನಿಮ್ಮಲ್ಲಿ ಉಂಟು.</verse>
				<verse number="9">ನೀವು ಯೆಹೋವ ದೇವರ ಯಾಜಕರಾದ ಆರೋನನ ವಂಶದವರಾದ ಲೇವಿಯರನ್ನೂ ತಳ್ಳಿ ಹಾಕಿ, ಅನ್ಯದೇಶಗಳ ಜನರಂತೆ ನಿಮಗೆ ಯಾಜಕರನ್ನು ಮಾಡಿಕೊಳ್ಳಲಿಲ್ಲವೋ? ಯಾವನಾದರೂ ದನದ ಮರಿಯಾದ ಹೋರಿಯನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ಬಂದು, ತನ್ನನ್ನು ಪ್ರತಿಷ್ಠೆ ಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನಷ್ಟೇ.</verse>
				<verse number="10">“ನಮಗಾದರೋ ಯೆಹೋವ ದೇವರು ದೇವರಾಗಿದ್ದಾರೆ. ನಾವು ಅವರನ್ನು ಬಿಡಲಿಲ್ಲ. ಇದಲ್ಲದೆ ಯೆಹೋವ ದೇವರಿಗೆ ಸೇವೆ ಮಾಡುವ ಯಾಜಕರು ಆರೋನನ ಮಕ್ಕಳು. ಲೇವಿಯರು ಅವರಿಗೆ ಕೆಲಸದಲ್ಲಿ ಸಹಾಯ ಮಾಡುತ್ತಿದ್ದರು.</verse>
				<verse number="11">ಅವರು ಪ್ರತಿ ಉದಯದಲ್ಲಿಯೂ, ಪ್ರತಿ ಸಾಯಂಕಾಲದಲ್ಲಿಯೂ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುತ್ತಾ, ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ ಸಿದ್ಧಮಾಡಿ ಹಚ್ಚುತ್ತಾ ಇರುತ್ತಾರೆ. ನಾವು ನಮ್ಮ ದೇವರಾದ ಯೆಹೋವ ದೇವರ ಕಟ್ಟಳೆಯನ್ನು ಕೈಗೊಳ್ಳುತ್ತೇವೆ, ಆದರೆ ನೀವು ಅವರನ್ನು ಬಿಟ್ಟಿದ್ದೀರಿ.</verse>
				<verse number="12">ದೇವರು ತಾವೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾರೆ. ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡಿದುಕೊಂಡ ಅವರ ಯಾಜಕರು ನಮಗಿದ್ದಾರೆ. ಇಸ್ರಾಯೇಲರೇ, ನೀವು ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಯುದ್ಧಮಾಡಬೇಡಿರಿ. ನೀವು ಜಯಹೊಂದುವುದಿಲ್ಲ,” ಎಂದನು.</verse>
				<verse number="13">ಆದರೆ ಯಾರೊಬ್ಬಾಮನು ಅಡಗಿಕೊಂಡವರನ್ನು ಸುತ್ತಲೂ ಅವರ ಹಿಂದೆ ಬರಮಾಡಿದನು. ಆದ್ದರಿಂದ ಇಸ್ರಾಯೇಲರು ಯೆಹೂದದವರ ಮುಂದೆಯೂ, ಅವರ ಹಿಂದೆಯೂ ಬಂದರು.</verse>
				<verse number="14">ಯೆಹೂದದವರು ಹಿಂದಕ್ಕೆ ನೋಡಿದಾಗ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಯೆಹೋವ ದೇವರಿಗೆ ಅವರು ಮೊರೆಯಿಟ್ಟರು. ಯಾಜಕರು ತುತೂರಿಗಳನ್ನು ಊದಿದರು.</verse>
				<verse number="15">ಆಗ ಯೆಹೂದ್ಯರು ಆರ್ಭಟಿಸಿದರು. ಯೆಹೂದ್ಯರು ಆರ್ಭಟಿಸಿದಾಗ, ದೇವರು ಅಬೀಯನ ಮತ್ತು ಯೆಹೂದದವರ ಮುಂದೆ ಯಾರೊಬ್ಬಾಮನನ್ನೂ, ಸಮಸ್ತ ಇಸ್ರಾಯೇಲರನ್ನೂ ಅಪಜಯಗೊಳಿಸಿದರು.</verse>
				<verse number="16">ಇಸ್ರಾಯೇಲರು ಯೆಹೂದದವರ ಎದುರಿನಿಂದ ಓಡಿಹೋದರು. ಹೀಗೆ ದೇವರು ಇಸ್ರಾಯೇಲರನ್ನು ಯೆಹೂದದವರ ಕೈಯಲ್ಲಿ ಒಪ್ಪಿಸಿದರು.</verse>
				<verse number="17">ಅಬೀಯನೂ, ಅವನ ಜನರೂ ಅವರಲ್ಲಿ ಬಹಳ ಮಂದಿಯನ್ನು ಹತಮಾಡಿದರು. ಇಸ್ರಾಯೇಲರಲ್ಲಿ ಐದು ಲಕ್ಷಮಂದಿ ಬಲಶಾಲಿಗಳಾದ ಸೈನಿಕರು ಹತರಾದರು.</verse>
				<verse number="18">ಹೀಗೆ ಆ ಕಾಲದಲ್ಲಿ ಇಸ್ರಾಯೇಲರು ತಗ್ಗಿಹೋದರು. ಆದರೆ ಯೆಹೂದದವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಮೇಲೆ ಆತುಕೊಂಡದ್ದರಿಂದ ಜಯ ಹೊಂದಿದರು.</verse>
				<verse number="19">ಅಬೀಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣಗಳನ್ನೂ, ಅವುಗಳ ಗ್ರಾಮಗಳನ್ನೂ ವಶಪಡಿಸಿಕೊಂಡನು.</verse>
				<verse number="20">ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ತಿರುಗಿ ಬಲಗೊಳ್ಳಲಿಲ್ಲ. ಯೆಹೋವ ದೇವರ ಶಿಕ್ಷೆಯಿಂದ ಯಾರೊಬ್ಬಾಮನು ಸತ್ತನು.</verse>
				<verse number="21">ಅಬೀಯನು ಪ್ರಬಲನಾದನು. ಅವನಿಗೆ ಹದಿನಾಲ್ಕು ಮಂದಿ ಹೆಂಡತಿಯರೂ, ಇಪ್ಪತ್ತೆರಡು ಮಂದಿ ಪುತ್ರರೂ, ಹದಿನಾರು ಮಂದಿ ಪುತ್ರಿಯರೂ ಇದ್ದರು.</verse>
				<verse number="22">ಅಬೀಯನ ಮಿಕ್ಕಾದ ಕ್ರಿಯೆಗಳೂ, ಅವನ ನಡೆನುಡಿಗಳ ಮಾತುಗಳೂ ಪ್ರವಾದಿಯಾದ ಇದ್ದೋವನ ವರ್ತಮಾನಗಳಲ್ಲಿ ಬರೆದಿರುತ್ತವೆ.</verse>
			</chapter>
			<chapter number="14">
				<verse number="1">ಅಬೀಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು, ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಆಸನು ಅವನಿಗೆ ಬದಲಾಗಿ ಅರಸನಾದನು, ಅವನ ದಿವಸಗಳಲ್ಲಿ ಹತ್ತು ವರ್ಷ ದೇಶವು ಶಾಂತವಾಗಿತ್ತು.</verse>
				<verse number="2">ಆಸನು ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನೂ, ಸರಿಯಾದದ್ದನ್ನೂ ಮಾಡಿದನು.</verse>
				<verse number="3">ಅವನು ಅನ್ಯದೇವರುಗಳ ಬಲಿಪೀಠಗಳನ್ನೂ, ಉನ್ನತ ಪೂಜಾಸ್ಥಳಗಳನ್ನೂ ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅವುಗಳ ಅಶೇರ ಸ್ತಂಭಗಳನ್ನು ಕಡಿದುಹಾಕಿದನು.</verse>
				<verse number="4">ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಹುಡುಕಲೂ, ನಿಯಮವನ್ನೂ, ಆಜ್ಞೆಯನ್ನೂ ಕೈಗೊಳ್ಳಲು ಯೆಹೂದ್ಯರಿಗೆ ಆಜ್ಞಾಪಿಸಿದನು.</verse>
				<verse number="5">ಇದಲ್ಲದೆ ಅವನು ಉನ್ನತ ಪೂಜಾಸ್ಥಳಗಳನ್ನೂ, ವಿಗ್ರಹಗಳನ್ನೂ ಯೆಹೂದದ ಸಮಸ್ತ ಪಟ್ಟಣಗಳಿಂದ ತೆಗೆದುಹಾಕಿದನು. ರಾಜ್ಯವು ಶಾಂತವಾಗಿತ್ತು.</verse>
				<verse number="6">ಇದಲ್ಲದೆ ಅವನು ಯೆಹೂದದಲ್ಲಿ ಕೋಟೆಗಳುಳ್ಳ ಪಟ್ಟಣಗಳನ್ನು ಕಟ್ಟಿದನು. ಏಕೆಂದರೆ ದೇಶವು ಶಾಂತವಾಗಿತ್ತು. ಯೆಹೋವ ದೇವರು ಅವನಿಗೆ ವಿಶ್ರಾಂತಿ ಕೊಟ್ಟದ್ದರಿಂದ ಆ ವರ್ಷಗಳಲ್ಲಿ ಅವನಿಗೆ ಯುದ್ಧವಿರಲಿಲ್ಲ.</verse>
				<verse number="7">ಅವನು ಯೆಹೂದದವರಿಗೆ, “ದೇಶವು ನಮ್ಮ ಮುಂದೆ ಇರುವಾಗ ಈ ಪಟ್ಟಣಗಳನ್ನು ಕಟ್ಟಿ, ಅವುಗಳ ಸುತ್ತಲೂ ಗೋಡೆಗಳನ್ನೂ, ಗೋಪುರಗಳನ್ನೂ, ಬಾಗಿಲುಗಳನ್ನೂ, ಅಗುಳಿಗಳನ್ನೂ ಮಾಡೋಣ. ಏಕೆಂದರೆ ನಾವು ನಮ್ಮ ದೇವರಾದ ಯೆಹೋವ ದೇವರನ್ನು ಹುಡುಕಿದೆವು. ನಾವು ಅವರನ್ನು ಹುಡುಕಿದ್ದರಿಂದ ಅವರು ಎಲ್ಲಾ ಕಡೆಯಲ್ಲಿಯೂ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾರೆ,” ಎಂದನು. ಹಾಗೆಯೇ ಅವರು ಸೈನ್ಯವನ್ನು ಕಟ್ಟಿ ವೃದ್ಧಿಹೊಂದಿದರು.</verse>
				<verse number="8">ಇದಲ್ಲದೆ ಆಸನಿಗೆ ದೊಡ್ಡ ಗುರಾಣಿಗಳನ್ನೂ, ಈಟಿಗಳನ್ನೂ ಹಿಡಿಯುವ ಸೈನ್ಯವಿತ್ತು. ಯೆಹೂದದವರು ಮೂರು ಲಕ್ಷ ಮಂದಿಯೂ, ಬೆನ್ಯಾಮೀನವರಲ್ಲಿ ಚಿಕ್ಕ ಗುರಾಣಿಗಳನ್ನು ಹಿಡಿಯುವ, ಬಿಲ್ಲುಗಳನ್ನು ಎಸೆಯುವ ಎರಡು ಲಕ್ಷದ ಎಂಬತ್ತು ಸಾವಿರ ಮಂದಿಯೂ ಇದ್ದರು. ಇವರೆಲ್ಲರು ಪರಾಕ್ರಮಶಾಲಿ ಯುದ್ಧವೀರರಾಗಿದ್ದರು.</verse>
				<verse number="9">ಆದರೆ ಕೂಷ್ಯನಾದ ಜೆರಹನು ಅವರಿಗೆ ವಿರೋಧವಾಗಿ ಹೊರಟು, ಮಾರೇಷಾದ ಮಟ್ಟಿಗೂ ಬಂದನು. ಅವನ ಸಂಗಡ ಹತ್ತು ಲಕ್ಷ ಜನ ಯುದ್ಧವೀರರೂ, ಮುನ್ನೂರು ರಥಗಳೂ ಇದ್ದವು.</verse>
				<verse number="10">ಆಸನು ಅವನಿಗೆದುರಾಗಿ ಹೊರಟುಹೋದನು. ಮಾರೇಷಾದ ಬಳಿಯಲ್ಲಿ ಚೆಫಾತಾದ ತಗ್ಗಿನಲ್ಲಿ ವ್ಯೂಹ ಕಟ್ಟಿದರು.</verse>
				<verse number="11">ಆಗ ಆಸನು ತನ್ನ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸಿ, “ಯೆಹೋವ ದೇವರೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯ ಕೊಡುವುದು ನಿಮಗೆ ಏನೂ ಅಲ್ಲ. ನಮ್ಮ ದೇವರಾದ ಯೆಹೋವ ದೇವರೇ, ನಮಗೆ ಸಹಾಯಮಾಡಿರಿ. ಏಕೆಂದರೆ ನಾವು ನಿಮ್ಮ ಮೇಲೆ ಆತುಕೊಂಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ. ಯೆಹೋವ ದೇವರೇ, ನೀವೇ ನಮ್ಮ ದೇವರು. ಮನುಷ್ಯನು ನಿಮ್ಮೆದುರಿನಲ್ಲಿ ಬಲಗೊಳ್ಳದಿರಲಿ,” ಎಂದನು.</verse>
				<verse number="12">ಆಗ ಯೆಹೋವ ದೇವರು ಕೂಷ್ಯರನ್ನು ಆಸನ ಮುಂದೆಯೂ, ಯೆಹೂದದವರ ಮುಂದೆಯೂ ಸೋಲುವಂತೆ ಮಾಡಿದರು. ಆದ್ದರಿಂದ ಕೂಷ್ಯರು ಓಡಿಹೋದರು.</verse>
				<verse number="13">ಆಗ ಆಸನೂ, ಅವನ ಸಂಗಡ ಇದ್ದ ಜನರೂ ಅವರನ್ನು ಗೆರಾರಿನವರೆಗೂ ಹಿಂದಟ್ಟಿದರು. ಹೆಚ್ಚಿನ ಸಂಖ್ಯೆಯಲ್ಲಿ ಕೂಷ್ಯರು ಸೋತುಹೋದರು. ಅವರು ಯೆಹೋವ ದೇವರ ಮುಂದೆಯೂ, ಅವರ ಸೈನ್ಯದ ಮುಂದೆಯೂ ನಾಶವಾದರು. ಯೆಹೂದ್ಯರು ಬಹು ಕೊಳ್ಳೆಯನ್ನು ಒಯ್ದರು.</verse>
				<verse number="14">ಇದಲ್ಲದೆ ಅವರು ಗೆರಾರಿನ ಸುತ್ತಲಿರುವ ಸಮಸ್ತ ಪಟ್ಟಣಗಳನ್ನು ವಶಪಡಿಸಿಕೊಂಡರು. ಯೆಹೋವ ದೇವರ ಭಯವು ಅವರ ಮೇಲೆ ಇತ್ತು. ಆ ಪಟ್ಟಣಗಳಲ್ಲಿ ಬಹು ಕೊಳ್ಳೆ ಇದ್ದುದರಿಂದ, ಅವುಗಳನ್ನೆಲ್ಲಾ ವಶಪಡಿಸಿಕೊಂಡರು.</verse>
				<verse number="15">ಪಶುಗಳಿದ್ದ ಡೇರೆಗಳನ್ನೂ, ಕುರಿಗಳನ್ನೂ, ಒಂಟೆಗಳನ್ನೂ ಬಹಳವಾಗಿ ತೆಗೆದುಕೊಂಡು ಯೆರೂಸಲೇಮಿಗೆ ತಿರುಗಿ ಬಂದರು.</verse>
			</chapter>
			<chapter number="15">
				<verse number="1">ಆಗ ದೇವರ ಆತ್ಮವು ಓದೇದನ ಮಗನಾದ ಅಜರ್ಯನ ಮೇಲೆ ಬಂದದ್ದರಿಂದ,</verse>
				<verse number="2">ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, “ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು</verse>
				<verse number="3">ಬಹುಕಾಲ ಇಸ್ರಾಯೇಲರು ನಿಜವಾದ ದೇವರಿಲ್ಲದೆ ಬೋಧಿಸುವ ಯಾಜಕನಿಲ್ಲದೆ, ನಿಯಮವಿಲ್ಲದೆ ಇದ್ದರು.</verse>
				<verse number="4">ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿ ಅವರನ್ನು ಹುಡುಕಿದಾಗ ಅವರಿಗೆ ದೇವರು ಸಿಕ್ಕಿದರು.</verse>
				<verse number="5">ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ, ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು. ದೇಶದ ನಿವಾಸಿಗಳು ಬಹಳವಾಗಿ ಹೆದರಿದ್ದರು.</verse>
				<verse number="6">ಜನಾಂಗವು ಜನಾಂಗದಿಂದಲೂ, ಪಟ್ಟಣವು ಪಟ್ಟಣದಿಂದಲೂ ನಾಶವಾಯಿತು. ದೇವರು ಸಕಲ ಇಕ್ಕಟ್ಟುಗಳಿಂದ ಅವರನ್ನು ತೊಂದರೆಪಡಿಸಿದರು.</verse>
				<verse number="7">ಆದ್ದರಿಂದ ನೀವು ಬಲಗೊಳ್ಳಿರಿ. ನಿಮ್ಮ ಕೈಗಳು ಬಲಹೀನವಾಗದೆ ಇರಲಿ. ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವುದು,” ಎಂದನು.</verse>
				<verse number="8">ಆಸನು ಆ ಮಾತುಗಳನ್ನೂ, ಪ್ರವಾದಿಯಾದ ಓದೇದನ ಮಗ ಅಜರ್ಯನ ಪ್ರವಾದನಾ ಮಾತುಗಳನ್ನೂ ಕೇಳಿದಾಗ, ಅವನು ಬಲಗೊಂಡು ಯೆಹೂದ ಬೆನ್ಯಾಮೀನಿನ ಸಮಸ್ತ ದೇಶದೊಳಗಿಂದಲೂ, ಎಫ್ರಾಯೀಮನ ಬೆಟ್ಟದಲ್ಲಿ ತಾನು ಹಿಡಿದ ಪಟ್ಟಣಗಳೊಳಗಿಂದಲೂ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ, ಯೆಹೋವ ದೇವರ ದ್ವಾರಾಂಗಳದ ಮುಂದೆ ಇದ್ದ ಯೆಹೋವ ದೇವರ ಬಲಿಪೀಠವನ್ನು ನೂತನಪಡಿಸಿದನು.</verse>
				<verse number="9">ತರುವಾಯ ಆಸನು ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರನ್ನು ಬರಮಾಡಿದನು. ಯೆಹೂದ ದೇಶದಲ್ಲಿ ನೆಲೆಸಿದ್ದ ಎಫ್ರಾಯೀಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನು ಸಹ ಕರೆಸಿಕೊಂಡನು. ಅವನ ದೇವರಾದ ಯೆಹೋವ ದೇವರು ಅವನ ಸಂಗಡ ಇದ್ದಾರೆಂದು ಇವರು ಕಂಡಾಗ, ಇಸ್ರಾಯೇಲಿನೊಳಗಿಂದ ಅನೇಕರು ಅವನ ಕಡೆಗೆ ಬಂದಿದ್ದರು.</verse>
				<verse number="10">ಹೀಗೆಯೇ ಆಸನ ಆಳಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಅವರು ಯೆರೂಸಲೇಮಿನಲ್ಲಿ ಕೂಡಿಕೊಂಡರು.</verse>
				<verse number="11">ಅದೇ ಕಾಲದಲ್ಲಿ ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ, ಏಳು ಸಾವಿರ ಕುರಿಗಳನ್ನೂ ಯೆಹೋವ ದೇವರಿಗೆ ಬಲಿ ಅರ್ಪಿಸಿದರು.</verse>
				<verse number="12">ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ತಮ್ಮ ಪೂರ್ಣಹೃದಯದಿಂದಲೂ, ತಮ್ಮ ಪೂರ್ಣಪ್ರಾಣದಿಂದಲೂ ಹುಡುಕಬೇಕೆಂದೂ</verse>
				<verse number="13">ಯಾವನಾದರೂ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಹುಡುಕದೆ ಹೋದರೆ; ಹಿರಿಯನಾದರೂ, ಕಿರಿಯನಾದರೂ, ಪುರುಷನಾದರೂ, ಸ್ತ್ರೀಯಾದರೂ ಸಾಯಬೇಕೆಂದು ಒಡಂಬಡಿಕೆ ಮಾಡಿಕೊಂಡರು.</verse>
				<verse number="14">ಮಹಾಶಬ್ದದಿಂದಲೂ, ಆರ್ಭಟದಿಂದಲೂ, ತುತೂರಿಗಳ ಶಬ್ದದಿಂದಲೂ, ಕೊಂಬುಗಳ ಶಬ್ದದಿಂದಲೂ ಯೆಹೋವ ದೇವರ ಮುಂದೆ ಆಣೆ ಇಟ್ಟರು.</verse>
				<verse number="15">ಯೆಹೂದದವರೆಲ್ಲರು ಪ್ರಮಾಣಕ್ಕೆ ಸಂತೋಷಪಟ್ಟರು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ಆಣೆ ಇಟ್ಟು, ತಮ್ಮ ಪೂರ್ಣ ಇಷ್ಟಪೂರ್ವಕವಾಗಿ ದೇವರನ್ನು ಹುಡುಕಿದರು; ದೇವರು ಅವರಿಗೆ ಸಿಕ್ಕಿದರು. ಯೆಹೋವ ದೇವರು ಅವರಿಗೆ ಸುತ್ತಲೂ ವಿಶ್ರಾಂತಿಕೊಟ್ಟರು.</verse>
				<verse number="16">ಅರಸನಾದ ಆಸನ ಅಜ್ಜಿ ಮಾಕ ಎಂಬವಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ, ಅವಳನ್ನು ರಾಜಮಾತೆಯ ಸ್ಥಾನದಿಂದ ತೆಗೆದುಹಾಕಿದನು. ಇದಲ್ಲದೆ ಆಸನು ಆ ಮೂರ್ತಿಯನ್ನು ಕಡಿದು ಚೂರುಚೂರು ಮಾಡಿ, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟುಬಿಟ್ಟನು.</verse>
				<verse number="17">ಇಸ್ರಾಯೇಲಿನೊಳಗಿಂದ ಪೂಜಾಸ್ಥಳಗಳನ್ನು ತೆಗೆದು ಹಾಕದಿದ್ದರೂ ಆಸನ ಹೃದಯವು ತನ್ನ ಜೀವಮಾನದಲ್ಲೆಲ್ಲಾ ಯೆಹೋವ ದೇವರಿಗೆ ಸಮರ್ಪಿತವಾಗಿತ್ತು.</verse>
				<verse number="18">ತಾನು ಮತ್ತು ತನ್ನ ತಂದೆಯೂ ಪ್ರತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಸಲಕರಣೆಗಳನ್ನೂ ದೇವರ ಆಲಯಕ್ಕೆ ತಂದನು.</verse>
				<verse number="19">ಆಸನ ಆಳ್ವಿಕೆಯಲ್ಲಿ ಮೂವತ್ತೈದನೆಯ ವರ್ಷದವರೆಗೂ ಯುದ್ಧವಿಲ್ಲದೆ ಇತ್ತು.</verse>
			</chapter>
			<chapter number="16">
				<verse number="1">ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು, ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲೀ, ಹೊರಗಾಗಲೀ ಯಾರೂ ಹೋಗದ ಹಾಗೆ ಸುತ್ತಲೂ ರಾಮ ಪಟ್ಟಣದ ಸುತ್ತಲೂ ಕೋಟೆಯನ್ನು ಕಟ್ಟಿಸಿದನು.</verse>
				<verse number="2">ಆಗ ಆಸನು ಯೆಹೋವ ದೇವರ ಆಲಯದ ಮತ್ತು ತನ್ನ ಅರಮನೆಯ ಬೊಕ್ಕಸಗಳಿಂದ ಬೆಳ್ಳಿಬಂಗಾರವನ್ನು ತೆಗೆದು, ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ ಅವನಿಗೆ,</verse>
				<verse number="3">“ನನ್ನ ತಂದೆ ಮತ್ತು ನಿನ್ನ ತಂದೆಯ ನಡುವೆ ಇದ್ದಂತೆ ನನ್ನ ಮತ್ತು ನಿನ್ನ ನಡುವೆ ಒಡಂಬಡಿಕೆ ಉಂಟು. ಇಗೋ ನಾನು ಬೆಳ್ಳಿಬಂಗಾರವನ್ನು ನಿನಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟುಹೋಗುವಂತೆ, ನೀನು ಅವನ ಸಂಗಡ ಮಾಡಿದ ಒಡಂಬಡಿಕೆಯನ್ನು ಮುರಿಯಬೇಕು,” ಎಂದು ಹೇಳಿದನು.</verse>
				<verse number="4">ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನ್ನ ಸೈನ್ಯಾಧಿಪತಿಗಳನ್ನು ಕಳುಹಿಸಿದನು. ಅವರು ಇಯ್ಯೋನ್, ದಾನ್ ಆಬೇಲ್ಮಯಿಮ್, ನಫ್ತಾಲ್ಯರ ಸಮಸ್ತ ಉಗ್ರಾಣಗಳ ಪಟ್ಟಣಗಳನ್ನು ವಶಪಡಿಸಿಕೊಂಡರು.</verse>
				<verse number="5">ಬಾಷನು ಇದನ್ನು ಕೇಳಿದಾಗ ರಾಮ ಪಟ್ಟಣದ ಸುತ್ತಲೂ ಕೋಟೆ ಕಟ್ಟಿಸುವುದನ್ನು ಬಿಟ್ಟು, ಅದರ ಎಲ್ಲಾ ಕೆಲಸಗಳನ್ನು ನಿಲ್ಲಿಸಿಬಿಟ್ಟನು.</verse>
				<verse number="6">ಆಗ ಅರಸನಾದ ಆಸನು ಯೆಹೂದದವರೆಲ್ಲರನ್ನು ಕರಕೊಂಡು ಹೋದನು. ಬಾಷನು ಕಟ್ಟಿಸುತ್ತಾ ಇದ್ದ ರಾಮ ಪಟ್ಟಣದ ಕಲ್ಲುಗಳನ್ನೂ, ಅದರ ತೊಲೆಗಳನ್ನೂ ತೆಗೆದುಕೊಂಡುಹೋಗಿ, ಅವುಗಳಿಂದ ಗಿಬೆಯ ಮತ್ತು ಮಿಚ್ಪೆ ಎಂಬ ನಗರಗಳನ್ನು ಕಟ್ಟಿಸಿದನು.</verse>
				<verse number="7">ಅದೇ ಕಾಲದಲ್ಲಿ ದರ್ಶಿಯಾದ ಹನಾನೀಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ದೇವರಾದ ಯೆಹೋವ ದೇವರ ಮೇಲೆ ಆತುಕೊಳ್ಳದೆ, ಅರಾಮಿನ ಅರಸನ ಮೇಲೆ ಆತುಕೊಂಡದ್ದರಿಂದ, ಅರಾಮಿನ ಅರಸನ ಸೈನ್ಯವು ನಿಮ್ಮ ಕೈಯಿಂದ ತಪ್ಪಿಸಿಕೊಂಡಿತು.</verse>
				<verse number="8">ಕೂಷನವರೂ, ಲಿಬಿಯದವರೂ ಮಹಾ ಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ, ರಾಹುತರೂ ಇದ್ದರಲ್ಲವೇ? ಆಗ ನೀನು ಯೆಹೋವ ದೇವರನ್ನು ಆತುಕೊಂಡದ್ದರಿಂದ ದೇವರು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದರು.</verse>
				<verse number="9">ಏಕೆಂದರೆ ಯೆಹೋವ ದೇವರಿಗೆ ಪೂರ್ಣವಾಗಿ ಸಮರ್ಪಿಸಿಕೊಂಡವರ ಹೃದಯವನ್ನು ಬಲಪಡಿಸುವುದಕ್ಕೆ ಅವರ ಕಣ್ಣುಗಳು ಭೂಲೋಕದ ಎಲ್ಲಾ ಕಡೆ ಇವೆ. ಆದರೆ ಈಗ ನೀನು ಬುದ್ಧಿಹೀನನಾಗಿ ನಡೆದುಕೊಂಡಿದ್ದೀಯೆ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದನು.</verse>
				<verse number="10">ಆಗ ಆಸನು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಇದರ ನಿಮಿತ್ತ ಅವನ ಮೇಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವರನ್ನು ಬಾಧಿಸಿದನು.</verse>
				<verse number="11">ಆಸನ ಆಳ್ವಿಕೆಯ ಮೊದಲಿನಿಂದ ಕಡೆಯವರೆಗೆ ಮಾಡಿದ ಕಾರ್ಯಗಳು ಯೆಹೂದದ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="12">ಆದರೆ ಆಸನು ತನ್ನ ಆಳಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ರೋಗ ತಗುಲಿತು. ಅವನ ರೋಗವು ಅತಿಘೋರವಾಯಿತು. ಆದರೆ ಅವನು ತನ್ನ ರೋಗದಲ್ಲಿ ಯೆಹೋವ ದೇವರನ್ನು ಹುಡುಕದೆ, ವೈದ್ಯರನ್ನು ಹುಡುಕಿದನು.</verse>
				<verse number="13">ಆಸನು ಮೃತನಾಗಿ ತನ್ನ ಪಿತೃಗಳ ಬಳಿ ಸೇರಿದನು. ತನ್ನ ಆಳಿಕೆಯ ನಾಲ್ವತ್ತೊಂದನೆಯ ವರ್ಷದಲ್ಲಿ ಮರಣಹೊಂದಿದನು.</verse>
				<verse number="14">ಅವನು ತನಗೋಸ್ಕರ ದಾವೀದನ ಪಟ್ಟಣದಲ್ಲಿ ಅಗಿಸಿದ ಅವನ ಸ್ವಂತ ಸಮಾಧಿಯಲ್ಲಿ ಅವನನ್ನು ಹೂಳಿಟ್ಟರು. ಅವರು ತೈಲಗಾರರ ವಿದ್ಯೆಯಿಂದ ಸಿದ್ಧಮಾಡಿದ ಸುಗಂಧಗಳಿಂದಲೂ, ನಾನಾ ವಿಧವಾದ ಪದಾರ್ಥಗಳಿಂದಲೂ ತುಂಬಿದ ಶವ ಪೆಟ್ಟಿಗೆಯಲ್ಲಿ ಅವನನ್ನು ಇಟ್ಟರು. ಅವನ ಗೌರವಕ್ಕಾಗಿ ಮಹಾ ಅಗ್ನಿಕುಂಡವನ್ನೇರ್ಪಡಿಸಿದರು.</verse>
			</chapter>
			<chapter number="17">
				<verse number="1">ಆಸನ ಮಗ ಯೆಹೋಷಾಫಾಟನು ಅವನಿಗೆ ಬದಲಾಗಿ ಆಳಿದನು. ಅವನು ಇಸ್ರಾಯೇಲಿಗೆ ವಿರೋಧವಾಗಿ ತನ್ನನ್ನು ಬಲಪಡಿಸಿಕೊಂಡನು.</verse>
				<verse number="2">ಇದಲ್ಲದೆ ಅವನು ಯೆಹೂದದಲ್ಲಿ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯವನ್ನು ಇಟ್ಟು, ಯೆಹೂದದಲ್ಲಿಟ್ಟ ಹಾಗೆ ತನ್ನ ತಂದೆಯಾದ ಆಸನು ತೆಗೆದುಕೊಂಡ ಎಫ್ರಾಯೀಮನ ಪಟ್ಟಣಗಳಲ್ಲಿ ಸೈನ್ಯಗಳನ್ನು ಇಟ್ಟನು.</verse>
				<verse number="3">ಯೆಹೋಷಾಫಾಟನು ಬಾಳ್ ದೇವರುಗಳನ್ನು ಅನುಸರಿಸದೆ, ತನ್ನ ತಂದೆ ದಾವೀದನ ಮೊದಲಿನ ಮಾರ್ಗದಲ್ಲಿ ನಡೆದದ್ದರಿಂದ, ಯೆಹೋವ ದೇವರು ಅವನ ಸಂಗಡ ಇದ್ದರು.</verse>
				<verse number="4">ತನ್ನ ತಂದೆಯ ದೇವರನ್ನು ಹುಡುಕಿ, ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ, ದೇವರ ಆಜ್ಞೆಗಳಲ್ಲಿ ನಡೆದನು.</verse>
				<verse number="5">ಆದ್ದರಿಂದ ಯೆಹೋವ ದೇವರು ರಾಜ್ಯವನ್ನು ಅವನ ಕೈಯಲ್ಲಿ ಸ್ಥಿರಪಡಿಸಿದರು. ಯೆಹೂದವೆಲ್ಲವೂ ಯೆಹೋಷಾಫಾಟನಿಗೆ ಕಾಣಿಕೆಯನ್ನು ಕೊಟ್ಟದ್ದರಿಂದ, ಅವನಿಗೆ ಐಶ್ವರ್ಯವೂ, ಘನತೆಯೂ ಅಧಿಕವಾಯಿತು.</verse>
				<verse number="6">ಅವನ ಹೃದಯವು ಯೆಹೋವ ದೇವರ ಮಾರ್ಗಗಳಲ್ಲಿ ಸಮರ್ಪಿತವಾಗಿತ್ತು. ಇದಲ್ಲದೆ ಅವನು ಯೆಹೂದದಲ್ಲಿದ್ದ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ವಿಗ್ರಹ ಸ್ತಂಭಗಳನ್ನೂ ತೆಗೆದುಹಾಕಿದನು.</verse>
				<verse number="7">ಅವನ ಆಳಿಕೆಯ ಮೂರನೆಯ ವರ್ಷದಲ್ಲಿ ಅವನು ತನ್ನ ಪ್ರಧಾನರಾದ ಬೆನ್ಹೈಲನನ್ನೂ, ಓಬದ್ಯನನ್ನೂ, ಜೆಕರ್ಯನನ್ನೂ, ನೆತನೆಯೇಲನನ್ನೂ, ಮೀಕಾಯನನ್ನೂ ಯೆಹೂದದ ಪಟ್ಟಣಗಳಲ್ಲಿ ಬೋಧಿಸಲು ಕರೆಕಳುಹಿಸಿದನು.</verse>
				<verse number="8">ಅವರ ಸಂಗಡ ಲೇವಿಯರಾದ ಶೆಮಾಯನನ್ನೂ, ನೆತನ್ಯನನ್ನೂ, ಜೆಬದ್ಯನನ್ನೂ, ಅಸಾಯೇಲನನ್ನೂ, ಶೆಮೀರಾಮೋತನನ್ನೂ, ಯೆಹೋನಾತಾನನನ್ನೂ, ಅದೋನೀಯನನ್ನೂ, ಟೋಬೀಯನನ್ನೂ, ಟೋಬದೋನಿಯನನ್ನೂ, ಇವರ ಸಂಗಡ ಯಾಜಕರಾದ ಎಲೀಷಾಮನನ್ನೂ, ಯೆಹೋರಾಮನನ್ನೂ ಕಳುಹಿಸಿದನು.</verse>
				<verse number="9">ಇವರು ಯೆಹೂದದಲ್ಲಿ ಬೋಧಿಸಿದರು. ಅವರ ಬಳಿಯಲ್ಲಿ ಯೆಹೋವ ದೇವರ ನಿಯಮದ ಗ್ರಂಥ ಇತ್ತು. ಯೆಹೂದದ ಸಮಸ್ತ ಪಟ್ಟಣಗಳನ್ನು ಸಂಚರಿಸಿ, ಜನರಿಗೆ ಬೋಧಿಸಿದರು.</verse>
				<verse number="10">ಯೆಹೋವ ದೇವರ ಭಯವು ಯೆಹೂದದ ಸುತ್ತಲಿರುವ ದೇಶಗಳ ಸಮಸ್ತ ರಾಜ್ಯಗಳ ಮೇಲೆ ಇದ್ದುದರಿಂದ, ಅವರು ಯೆಹೋಷಾಫಾಟನ ಮೇಲೆ ಯುದ್ಧಮಾಡಲಿಲ್ಲ.</verse>
				<verse number="11">ಇದಲ್ಲದೆ ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಗಳನ್ನೂ, ಕಪ್ಪದ ಹಣವನ್ನು ತಂದರು. ಅರಬಿಯ ದೇಶದವರು ತಮ್ಮ ಮಂದೆಗಳಿಂದ ಏಳು ಸಾವಿರದ ಏಳು ನೂರು ಟಗರುಗಳನ್ನೂ, ಏಳು ಸಾವಿರದ ಏಳು ನೂರು ಹೋತಗಳನ್ನೂ ತಂದರು.</verse>
				<verse number="12">ಯೆಹೋಷಾಫಾಟನು ಬರಬರುತ್ತಾ ಬಹಳ ಅಭಿವೃದ್ಧಿಯಾಗಿ ಯೆಹೂದದಲ್ಲಿ ಅರಮನೆಗಳನ್ನೂ, ಉಗ್ರಾಣದ ಪಟ್ಟಣಗಳನ್ನೂ ಕಟ್ಟಿಸಿದನು.</verse>
				<verse number="13">ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿ ದವಸ ಧಾನ್ಯಗಳ ದೊಡ್ಡ ಮಳಿಗೆಯನ್ನು ಕಟ್ಟಿದನು. ಪರಾಕ್ರಮಶಾಲಿಗಳಾದ ಯುದ್ಧವೀರರು ಯೆರೂಸಲೇಮಿನಲ್ಲಿದ್ದರು.</verse>
				<verse number="14">ತಮ್ಮ ಪಿತೃಗಳ ಮನೆಯ ಪ್ರಕಾರವಾಗಿರುವ ಅವರ ಲೆಕ್ಕವೇನೆಂದರೆ: ಯೆಹೂದದ 1,000 ಅಧಿಪತಿಗಳಲ್ಲಿ ಅದ್ನಾನು ಮುಖ್ಯಸ್ಥನಾಗಿದ್ದನು. ಅವನ ಸಂಗಡ ಪರಾಕ್ರಮಶಾಲಿಗಳು 3,00,000 ಮಂದಿ ಇದ್ದರು.</verse>
				<verse number="15">ಅವನ ತರುವಾಯ ಅಧಿಪತಿಯಾದ ಯೆಹೋಹಾನಾನನು; ಅವನ ಸಂಗಡ 2,80,000 ಮಂದಿಯು.</verse>
				<verse number="16">ಇವನ ತರುವಾಯ ಯೆಹೋವ ದೇವರಿಗೆ ತನ್ನನ್ನು ಮನಃಪೂರ್ವಕವಾಗಿ ಒಪ್ಪಿಸಿದ ಜಿಕ್ರಿಯ ಮಗನಾದ ಅಮಸ್ಯನು; ಅವನ ಸಂಗಡ 2,00,000 ಮಂದಿ ಪರಾಕ್ರಮಶಾಲಿಗಳು.</verse>
				<verse number="17">ಬೆನ್ಯಾಮೀನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ; ಇವನ ಸಂಗಡ ಬಿಲ್ಲನ್ನೂ, ಗುರಾಣಿಯನ್ನೂ ಧರಿಸಿಕೊಂಡಿರುವ 2,00,000 ಮಂದಿಯು.</verse>
				<verse number="18">ಇವನ ತರುವಾಯ ಯೆಹೋಜಾಬಾದನು; ಅವನ ಸಂಗಡ ಯುದ್ಧಕ್ಕೆ ಸಿದ್ಧವಾಗಿರುವ 1,80,000 ಮಂದಿಯು.</verse>
				<verse number="19">ಅರಸನಿಂದ ಸಮಸ್ತ ಯೆಹೂದದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇದ್ದವರ ಹೊರತಾಗಿ, ಇವರು ಅರಸನ ಬಳಿಯಲ್ಲಿ ಸೇವೆಮಾಡುತ್ತಿದ್ದರು.</verse>
			</chapter>
			<chapter number="18">
				<verse number="1">ಯೆಹೋಷಾಫಾಟನಿಗೆ ಐಶ್ವರ್ಯವೂ, ಘನತೆಯೂ ಅಧಿಕವಾಗಿರುವಾಗ, ಅವನು ಅಹಾಬನ ಸಂಗಡ ಬಂಧುತ್ವ ಮಾಡಿದನು.</verse>
				<verse number="2">ಕೆಲವು ವರ್ಷಗಳ ತರುವಾಯ ಅವನು ಅಹಾಬನ ಬಳಿಗೆ ಸಮಾರ್ಯಕ್ಕೆ ಹೋದನು. ಆಗ ಅಹಾಬನು ಅವನಿಗೋಸ್ಕರವೂ, ಅವನ ಸಂಗಡ ಇದ್ದ ಜನರಿಗೋಸ್ಕರವೂ ಅನೇಕ ಕುರಿದನಗಳನ್ನೂ ವಧಿಸಿ ಔತಣವನ್ನೇರ್ಪಡಿಸಿ, ತನ್ನ ಸಂಗಡ ಯುದ್ಧಕ್ಕಾಗಿ ಗಿಲ್ಯಾದಿನ ರಾಮೋತಿಗೆ ಹೋಗಲು ಪ್ರೇರೇಪಿಸಿದನು.</verse>
				<verse number="3">ಇಸ್ರಾಯೇಲಿನ ಅರಸನಾದ ಅಹಾಬನು ಯೆಹೂದದ ಅರಸನಾದ ಯೆಹೋಷಾಫಾಟನಿಗೆ, “ನೀನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ?” ಎಂದನು. ಅದಕ್ಕವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಾವು ಯುದ್ಧದಲ್ಲಿ ನಿನ್ನ ಸಂಗಡ ಇರುವೆವು,” ಎಂದನು.</verse>
				<verse number="4">ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ಈ ಹೊತ್ತು ಮೊದಲು ಯೆಹೋವ ದೇವರ ಆಲೋಚನೆಯನ್ನು ವಿಚಾರಿಸಿರಿ,” ಎಂದನು.</verse>
				<verse number="5">ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ ಅವರಿಗೆ, “ನಾನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ, ಬೇಡವೋ?” ಎಂದು ಕೇಳಿದನು. ಅದಕ್ಕವರು, “ಹೋಗು, ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು.</verse>
				<verse number="6">ಆದರೆ ಯೆಹೋಷಾಫಾಟನು, “ಯೆಹೋವ ದೇವರ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಬೇರೆ ಪ್ರವಾದಿ ಇಲ್ಲಿ ಇಲ್ಲವೋ?” ಎಂದು ಕೇಳಿದನು.</verse>
				<verse number="7">ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು.</verse>
				<verse number="8">ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು, “ಇಮ್ಲನ ಮಗನಾದ ಮೀಕಾಯನನ್ನು ಶೀಘ್ರವಾಗಿ ಕರೆದುಕೊಂಡು ಬಾ,” ಎಂದನು.</verse>
				<verse number="9">ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು, ಸಮಾರ್ಯದ ಬಾಗಿಲಿನ ಮುಂದೆ ಬಯಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತುಕೊಂಡಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸುತ್ತಿದ್ದರು.</verse>
				<verse number="10">ಆಗ ಕೆನಾನನ ಮಗನಾದ ಚಿದ್ಕೀಯನು, “ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು, ‘ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.</verse>
				<verse number="11">ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ, “ಗಿಲ್ಯಾದಿನ ರಾಮೋತಿಗೆ ಹೋಗಿ ಜಯ ಹೊಂದು. ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು.</verse>
				<verse number="12">ಆದರೆ ಮೀಕಾಯನನ್ನು ಕರೆಯಲು ಹೋದ ದೂತನು ಅವನಿಗೆ, “ನೋಡು, ಎಲ್ಲ ಪ್ರವಾದಿಗಳು ಏಕಮನಸ್ಸಿನಿಂದ ಅರಸನಿಗೆ ಒಳ್ಳೆಯದನ್ನೇ ಪ್ರವಾದಿಸಿದ್ದಾರೆ. ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೆಯ ಮಾತು ಆಡು,” ಎಂದನು.</verse>
				<verse number="13">ಅದಕ್ಕೆ ಮೀಕಾಯನು, “ಯೆಹೋವ ದೇವರ ಜೀವದಾಣೆ, ನನ್ನ ದೇವರು ಏನು ಹೇಳುವರೋ, ಅದನ್ನೇ ಮಾತನಾಡುವೆನು,” ಎಂದನು.</verse>
				<verse number="14">ಅವನು ಅರಸನ ಬಳಿಗೆ ಬಂದಾಗ, ಅರಸನು ಅವನಿಗೆ, “ಮೀಕಾಯೆಹುವೇ, ನಾವು ಗಿಲ್ಯಾದಿನ ರಾಮೋತ್ ವಿರುದ್ಧವಾಗಿ ಯುದ್ಧಕ್ಕೆ ಹೋಗಬಹುದೋ ಅಥವಾ ಬೇಡವೋ?” ಎಂದನು. ಆಗ ಅವನು, “ಹೋಗಿ ಜಯ ಹೊಂದಿರಿ. ಅವರು ನಿಮ್ಮ ಕೈವಶರಾಗುವರು,” ಎಂದನು.</verse>
				<verse number="15">ಆಗ ಅರಸನು ಅವನಿಗೆ, “ನೀನು ಯೆಹೋವ ದೇವರ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು?” ಎಂದನು.</verse>
				<verse number="16">ಅದಕ್ಕೆ ಮೀಕಾಯನು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳ ಮೇಲೆ ಚದರಿಹೋದದ್ದನ್ನು ಕಂಡೆನು. ಆಗ ಯೆಹೋವ ದೇವರು, ‘ಇವರಿಗೆ ಯಜಮಾನನು ಇಲ್ಲ. ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂದಿರುಗಿ ಹೋಗಲಿ,’ ಎಂಬುದಾಗಿ ಹೇಳಿದರು,” ಎಂದನು.</verse>
				<verse number="17">ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ಇವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ?” ಎಂದನು.</verse>
				<verse number="18">ಆಗ ಮೀಕಾಯನು, “ಆದ್ದರಿಂದ ಯೆಹೋವ ದೇವರ ವಾಕ್ಯವನ್ನು ಕೇಳು. ಯೆಹೋವ ದೇವರು ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡಿರುವುದನ್ನೂ ಆಕಾಶದ ಸಮಸ್ತ ಸೈನ್ಯವು ಅವರ ಬಲಗಡೆ ಮತ್ತು ಎಡಗಡೆಯಲ್ಲಿ ನಿಂತಿರುವುದನ್ನೂ ನಾನು ಕಂಡೆನು.</verse>
				<verse number="19">ಆಗ ಯೆಹೋವ ದೇವರು, ‘ಇಸ್ರಾಯೇಲಿನ ಅರಸನಾದ ಅಹಾಬನು ಹೋಗಿ ಗಿಲ್ಯಾದಿನ ರಾಮೋತಿನಲ್ಲಿ ಬೀಳುವ ಹಾಗೆ ಅವನನ್ನು ಮರುಳುಗೊಳಿಸುವವನು ಯಾರು?’ ಎಂದರು. “ಒಬ್ಬನು ಒಂದು ವಿಧವಾಗಿಯೂ ಮತ್ತೊಬ್ಬನು ಇನ್ನೊಂದು ವಿಧವಾಗಿಯೂ ಹೇಳುತ್ತಿದ್ದರು.</verse>
				<verse number="20">ಕೊನೆಯಲ್ಲಿ, ಒಂದು ಆತ್ಮವು ಹೊರಟುಬಂದು ಯೆಹೋವ ದೇವರ ಮುಂದೆ ನಿಂತು, ‘ನಾನು ಅವನನ್ನು ಮರುಳುಗೊಳಿಸುತ್ತೇನೆ,’ ಎಂದಿತು. “ಆಗ ಯೆಹೋವ ದೇವರು, ‘ಅದು ಹೇಗೆ?’ ಎಂದರು.</verse>
				<verse number="21">“ಅದಕ್ಕದು, ‘ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳನ್ನಾಡುವ ಆತ್ಮವಾಗಿರುವೆನು,’ ಎಂದಿತು. “ಅದಕ್ಕೆ ಯೆಹೋವ ದೇವರು, ‘ನೀನು ಅವನನ್ನು ಮರುಳುಗೊಳಿಸುವೆ ಮತ್ತು ಜಯಿಸುವೆ, ಹೊರಟುಹೋಗಿ ಹಾಗೆ ಮಾಡು,’ ಎಂದರು.</verse>
				<verse number="22">“ಆದ್ದರಿಂದ ಇಗೋ, ಯೆಹೋವ ದೇವರು ಈ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳನ್ನಾಡುವ ಆತ್ಮವನ್ನು ಇಟ್ಟಿದ್ದಾರೆ. ಇದಲ್ಲದೆ ಯೆಹೋವ ದೇವರು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾರೆ,” ಎಂದನು.</verse>
				<verse number="23">ಆಗ ಕೆನಾನನ ಮಗನಾದ ಚಿದ್ಕೀಯನು ಸಮೀಪಕ್ಕೆ ಬಂದು ಮೀಕಾಯನ ಕೆನ್ನೆಯ ಮೇಲೆ ಹೊಡೆದು, “ಯೆಹೋವ ದೇವರ ಆತ್ಮವು ನನ್ನನ್ನು ಬಿಟ್ಟು, ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಬಂದಿತು?” ಎಂದನು.</verse>
				<verse number="24">ಅದಕ್ಕೆ ಮೀಕಾಯನು, “ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ನೀನು ಹೋಗುವ ದಿವಸದಲ್ಲಿ ನೋಡುವೆ,” ಎಂದನು.</verse>
				<verse number="25">ಆಗ ಇಸ್ರಾಯೇಲಿನ ಅರಸನು ಹೇಳಿದ್ದೇನೆಂದರೆ, “ನೀವು ಮೀಕಾಯನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ, ಅರಸನ ಮಗನಾದ ಯೋವಾಷನ ಬಳಿಗೂ ತೆಗೆದುಕೊಂಡುಹೋಗಿ,</verse>
				<verse number="26">‘ನಾನು ಸಮಾಧಾನವಾಗಿ ತಿರುಗಿ ಬರುವವರೆಗೂ ನೀವು ಇವನನ್ನು ಸೆರೆಮನೆಯಲ್ಲಿಟ್ಟು, ಅವನಿಗೆ ರೊಟ್ಟಿ ಮತ್ತು ನೀರನ್ನು ಬಿಟ್ಟು ಮತ್ತೇನೂ ಕೊಡಬೇಡಿರೆಂದು ಅರಸನು ಹೇಳಿದ್ದಾನೆ’ ಎಂದು ತಿಳಿಸು,” ಎಂದನು.</verse>
				<verse number="27">ಅದಕ್ಕೆ ಮೀಕಾಯನು, “ನೀನು ಸಮಾಧಾನದಿಂದ ನಿಜವಾಗಿ ಬಂದರೆ, ಯೆಹೋವ ದೇವರು ನನ್ನ ಮುಖಾಂತರ ಮಾತನಾಡಿಲ್ಲ, ಎಂದು ಹೇಳಿ; ಜನರೇ, ನೀವೆಲ್ಲರೂ ನನ್ನ ಮಾತನ್ನು ಗಮನದಲ್ಲಿಡಿರಿ!” ಎಂದು ಕೂಗಿ ಹೇಳಿದನು.</verse>
				<verse number="28">ಹೀಗೆಯೇ ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು.</verse>
				<verse number="29">ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ಯುದ್ಧದಲ್ಲಿ ಪ್ರವೇಶಿಸುವೆನು. ಆದರೆ ನೀನು ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡಿರು,” ಎಂದನು. ಹಾಗೆಯೇ ಇಸ್ರಾಯೇಲಿನ ಅರಸನು ವೇಷಹಾಕಿಕೊಂಡು ಯುದ್ಧಕ್ಕೆ ಹೋದನು.</verse>
				<verse number="30">ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲಿನ ಅರಸನನ್ನು ಮಾತ್ರ ಗುರಿಯಾಗಿಸಿಕೊಂಡು ಯುದ್ಧಮಾಡಿರಿ,” ಎಂದು ಆಜ್ಞಾಪಿಸಿದನು.</verse>
				<verse number="31">ಆದ್ದರಿಂದ ರಥಗಳ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ, “ಇವನೇ ಇಸ್ರಾಯೇಲಿನ ಅರಸನು,” ಎಂದು ಹೇಳಿ ಅವನ ಸಂಗಡ ಯುದ್ಧಮಾಡುವುದಕ್ಕೆ ತಿರುಗಿಕೊಂಡರು. ಆದರೆ ಯೆಹೋಷಾಫಾಟನು ಕೂಗಿಕೊಂಡನು. ಆಗ ಯೆಹೋವ ದೇವರು ಅವನಿಗೆ ಸಹಾಯಮಾಡಿ, ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದರು.</verse>
				<verse number="32">ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳಿಗೆ ಗೊತ್ತಾದಾಗ, ಅವರು ಅವನನ್ನು ಬಿಟ್ಟುಹೋದರು.</verse>
				<verse number="33">ಆದರೆ ಅರಾಮ್ಯರ ಸೈನಿಕನೊಬ್ಬನು ಗುರಿ ಇಡದೆ ಬಿಲ್ಲಿಗೆ ಬಾಣವನ್ನೇರಿಸಿ ಹೊಡೆಯಲು, ಅದು ಇಸ್ರಾಯೇಲಿನ ಅರಸನಿಗೆ, ಅವನ ಕವಚದ ಸಂದಿನಲ್ಲಿ ಬಂದು ತಾಕಿತು. ಆದ್ದರಿಂದ ಅವನು ತನ್ನ ರಥ ನಡೆಸುವವನಿಗೆ, “ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆಗೆ ತೆಗೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ,” ಎಂದನು.</verse>
				<verse number="34">ಆ ದಿವಸವೆಲ್ಲಾ ಯುದ್ಧವು ಬಹು ಘೋರವಾದದ್ದರಿಂದ ಇಸ್ರಾಯೇಲಿನ ಅರಸನಾದ ಅಹಾಬನು ಸಾಯಂಕಾಲದವರೆಗೂ ಅರಾಮ್ಯರಿಗೆ ಎದುರಾಗಿ ರಥದಲ್ಲಿಯೇ ಆತುಕೊಂಡು ನಿಂತಿದ್ದನು, ಸೂರ್ಯನು ಅಸ್ತಮಿಸಿದಾಗ ಅವನು ಮರಣಹೊಂದಿದನು.</verse>
			</chapter>
			<chapter number="19">
				<verse number="1">ಯೆಹೂದದ ಅರಸನಾದ ಯೆಹೋಷಾಫಾಟನು ಸಮಾಧಾನವಾಗಿ ಯೆರೂಸಲೇಮಿನಲ್ಲಿರುವ ತನ್ನ ಅರಮನೆಗೆ ತಿರುಗಿಬಂದನು.</verse>
				<verse number="2">ಆಗ ಪ್ರವಾದಿ ಹನಾನೀಯ ಮಗ ಯೇಹುವು ಅವನನ್ನು ಎದುರುಗೊಂಡು, ಅರಸನಾದ ಯೆಹೋಷಾಫಾಟನಿಗೆ ಅವನು, “ದುಷ್ಟನಿಗೆ ಸಹಾಯ ಕೊಡುವವನಾಗಿ ಯೆಹೋವ ದೇವರನ್ನು ದ್ವೇಷಮಾಡುವವರನ್ನು ಪ್ರೀತಿಮಾಡಬಹುದೋ? ಆದಕಾರಣ ನಿನ್ನ ಮೇಲೆ ಯೆಹೋವ ದೇವರ ಸನ್ನಿಧಿಯಿಂದ ಕೋಪಾಗ್ನಿ ಇದೆ.</verse>
				<verse number="3">ಆದರೂ ನೀನು ದೇಶದಿಂದ ಅಶೇರ ಸ್ತಂಭಗಳನ್ನು ತೆಗೆದುಹಾಕಿ, ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ, ನಿನ್ನಲ್ಲಿ ಉತ್ತಮವಾದ ಕಾರ್ಯಗಳು ತೋರಿಬಂದಿವೆ,” ಎಂದನು.</verse>
				<verse number="4">ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸವಾಗಿದ್ದನು. ಅವನು ತಿರುಗಿ ಹೊರಟು ಬೇರ್ಷೆಬ ಮೊದಲುಗೊಂಡು ಎಫ್ರಾಯೀಮನ ಬೆಟ್ಟದ ಮಟ್ಟಿಗೂ ಜನರಲ್ಲಿ ಸಂಚರಿಸಿ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಕಡೆಗೆ ಅವರನ್ನು ತಿರುಗಿಸಿದನು.</verse>
				<verse number="5">ಇದಲ್ಲದೆ ಅವನು ದೇಶದೊಳಗೆ ಪಟ್ಟಣ ಪಟ್ಟಣದಲ್ಲಿ ಯೆಹೂದದ ಸಮಸ್ತ ಕೋಟೆಗಳುಳ್ಳ ಪಟ್ಟಣಗಳೊಳಗೆ ನ್ಯಾಯಾಧಿಪತಿಗಳಿಗೆ,</verse>
				<verse number="6">“ನೀವು ಮಾಡುವುದನ್ನು ನೋಡಿಕೊಳ್ಳಿರಿ. ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಯೆಹೋವ ದೇವರಿಗೋಸ್ಕರ ನ್ಯಾಯ ತೀರಿಸುತ್ತೀರಿ.</verse>
				<verse number="7">ಆದಕಾರಣ ಯೆಹೋವ ದೇವರ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡೆಯಿರಿ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಬಳಿಯಲ್ಲಿ ಅನ್ಯಾಯವಾದರೂ, ಮುಖದಾಕ್ಷಿಣ್ಯವಾದರೂ, ಲಂಚ ತೆಗೆದುಕೊಳ್ಳುವುದಾದರೂ ಇಲ್ಲ,” ಎಂದನು.</verse>
				<verse number="8">ಅವರು ಯೆರೂಸಲೇಮಿಗೆ ತಿರುಗಿ ಬಂದ ತರುವಾಯ ಯೆಹೋಷಾಫಾಟನು ಯೆಹೋವ ದೇವರ ನ್ಯಾಯತೀರ್ವಿಕೆಗೋಸ್ಕರವೂ, ವ್ಯಾಜ್ಯಗಳಿಗೋಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ, ಯಾಜಕರಲ್ಲಿಯೂ, ಇಸ್ರಾಯೇಲ್ ಗೋತ್ರಪ್ರಧಾನರಲ್ಲಿಯೂ ಕೆಲವರನ್ನು ನೇಮಿಸಿ ಅವರಿಗೆ,</verse>
				<verse number="9">“ನೀವು ಈ ಕಾರ್ಯವನ್ನು ಯೆಹೋವ ದೇವರ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣಹೃದಯದಿಂದಲೂ ಮಾಡಬೇಕು.</verse>
				<verse number="10">ಇದಲ್ಲದೆ ಜೀವಹತ್ಯ, ನ್ಯಾಯಕ್ಕೂ, ಆಜ್ಞೆಗೂ, ನಿಯಮಗಳಿಗೂ, ನ್ಯಾಯತೀರ್ವಿಕೆಗಳಿಗೂ ತಮ್ಮ ಪಟ್ಟಣಗಳಲ್ಲಿ ವಾಸವಾಗಿರುವ ನಿಮ್ಮ ಸಹೋದರರಿಂದ ಯಾವ ಕಾರ್ಯವಾದರೂ ನಿಮ್ಮ ಮುಂದೆ ಬಂದರೆ, ರೌದ್ರವು ನಿಮ್ಮ ಮೇಲೆಯೂ, ನಿಮ್ಮ ಸಹೋದರರ ಮೇಲೆಯೂ ಬಾರದ ಹಾಗೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡದಂತೆ ನೀವು ಅವರನ್ನು ಎಚ್ಚರಿಸಬೇಕು. ಇದನ್ನು ಮಾಡಿರಿ. ಆಗ ನೀವು ಅಪರಾಧವಿಲ್ಲದವರಾಗಿರುವಿರಿ.</verse>
				<verse number="11">“ಮುಖ್ಯಯಾಜಕನಾದ ಅಮರ್ಯನು ಯೆಹೋವ ದೇವರ ಸಮಸ್ತ ಕಾರ್ಯಗಳಲ್ಲಿಯೂ, ಯೆಹೂದದ ಮನೆಯ ನಾಯಕನಾಗಿರುವ ಇಷ್ಮಾಯೇಲನ ಮಗ ಜೆಬದ್ಯನು ಅರಸನ ಸಮಸ್ತ ಕಾರ್ಯಗಳಲ್ಲಿಯೂ ಇರುವರು. ಇದಲ್ಲದೆ ಲೇವಿಯರು ನಿಮ್ಮ ಮುಂದೆ ಅಧಿಕಾರಿಗಳಾಗಿರುವರು. ನೀವು ಬಲಗೊಂಡು ಕೆಲಸ ನಡೆಸಿರಿ. ಯೆಹೋವ ದೇವರು ಒಳ್ಳೆಯವರ ಸಂಗಡ ಇರುವರು,” ಎಂದನು.</verse>
			</chapter>
			<chapter number="20">
				<verse number="1">ಇದರ ತರುವಾಯ ಮೋವಾಬ್ಯರೂ, ಅಮ್ಮೋನಿಯರೂ, ಮೆಗೂನ್ಯರೂ ಯೆಹೋಷಾಫಾಟನ ಮೇಲೆ ಯುದ್ಧಮಾಡಲು ಬಂದರು.</verse>
				<verse number="2">ಆಗ ಕೆಲವರು ಬಂದು ಯೆಹೋಷಾಫಾಟನಿಗೆ, “ಅರಾಮಿನ ಈಚೆಯಲ್ಲಿರುವ ಲವಣ ಸಮುದ್ರದ ಆಚೆಯಿಂದ ನಿನಗೆ ವಿರೋಧವಾಗಿ ಮಹಾ ಸಮೂಹವೊಂದು ಬರುತ್ತದೆ. ಅವರು ಏನ್ಗೆದಿ ಎಂಬ ಹಜಜೋನ್ ತಾಮಾರಿನಲ್ಲಿ ಇದ್ದಾರೆ,” ಎಂದು ತಿಳಿಸಿದರು.</verse>
				<verse number="3">ಇದನ್ನು ಕೇಳಿ ಯೆಹೋಷಾಫಾಟನು ಭಯಪಟ್ಟು ಯೆಹೋವ ದೇವರನ್ನು ಹುಡುಕಲು ನಿರ್ಣಯಿಸಿಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸ ಮಾಡಬೇಕೆಂದು ಸಾರಿದನು.</verse>
				<verse number="4">ಆದ್ದರಿಂದ ಯೆಹೂದದವರು ಯೆಹೋವ ದೇವರಿಂದ ಸಹಾಯವನ್ನು ಕೇಳಿಕೊಳ್ಳಲು ಸಮಸ್ತ ಯೆಹೂದದ ಪಟ್ಟಣಗಳಿಂದ ಕೂಡಿಬಂದರು.</verse>
				<verse number="5">ಆಗ ಯೆಹೋಷಾಫಾಟನು ಹೊಸ ಅಂಗಳದ ಮುಂದೆ ಯೆಹೋವ ದೇವರ ಮಂದಿರದಲ್ಲಿರುವ ಯೆಹೂದದ ಯೆರೂಸಲೇಮಿನ ಜನಸಮೂಹದ ಮಧ್ಯದಲ್ಲಿ ನಿಂತು:</verse>
				<verse number="6">“ನಮ್ಮ ಪಿತೃಗಳ ದೇವರಾದ ಯೆಹೋವ ದೇವರೇ, ಪರಲೋಕದಲ್ಲಿರುವ ದೇವರು ನೀವಲ್ಲವೋ? ನೀವು ಜನಾಂಗಗಳ ಸಕಲ ರಾಜ್ಯಗಳ ಮೇಲೆ ಆಳುತ್ತೀರಲ್ಲವೋ? ಯಾವನೂ ನಿಮ್ಮನ್ನು ಎದುರಿಸಲಾಗದ ಹಾಗೆ ನಿಮ್ಮ ಕೈಯಲ್ಲಿ ಶಕ್ತಿಯೂ, ಪರಾಕ್ರಮವೂ ಇಲ್ಲವೋ?</verse>
				<verse number="7">ನೀವು ನಿಮ್ಮ ಜನವಾದ ಇಸ್ರಾಯೇಲಿನ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿಬಿಟ್ಟು, ಅದನ್ನು ನಿಮ್ಮ ಸ್ನೇಹಿತನಾದ ಅಬ್ರಹಾಮನ ಸಂತತಿಗೆ ಎಂದೆಂದಿಗೂ ಕೊಟ್ಟ ನೀವು, ನಮ್ಮ ದೇವರಲ್ಲವೋ?</verse>
				<verse number="8">ಅವರು ಅದರಲ್ಲಿ ನಿವಾಸಮಾಡಿ, ಅದರಲ್ಲಿ ನಿಮ್ಮ ಹೆಸರಿಗೆ ಪರಿಶುದ್ಧವಾದ ಸ್ಥಳವನ್ನು ಕಟ್ಟಿಸಿ,</verse>
				<verse number="9">‘ನಿಮ್ಮ ಹೆಸರು ಈ ಆಲಯದಲ್ಲಿರುವುದರಿಂದ ಖಡ್ಗವೂ ನ್ಯಾಯತೀರಿಸುವ ಶಿಕ್ಷೆಯೂ, ಘೋರವ್ಯಾಧಿಯೂ ಬರವೇನಾದರೂ ನಮ್ಮ ಮೇಲೆ ಬಂದರೆ, ನಾವು ಈ ಆಲಯದ ಮುಂದೆಯೂ, ನಿಮ್ಮ ಸಮ್ಮುಖದಲ್ಲಿಯೂ ನಿಂತು, ನಮ್ಮ ಇಕ್ಕಟ್ಟಿನಲ್ಲಿ ನಿಮ್ಮನ್ನು ಕೂಗುವಾಗ, ನೀವು ಕೇಳಿ ರಕ್ಷಿಸುವಿರಿ,’ ಎಂದು ಹೇಳಲಿಲ್ಲವೇ?</verse>
				<verse number="10">“ಈಗ, ಅಮ್ಮೋನ್ ಮೋವಾಬ್, ಸೇಯೀರ್ ಬೆಟ್ಟದ ಜನರು, ಇಸ್ರಾಯೇಲರು ಈಜಿಪ್ಟ್ ದೇಶದೊಳಗಿಂದ ಹೊರಟು ಬರುವಾಗ, ಅವರ ಕಡೆಗೆ ಹೋಗಲು ನೀವು ಇವರಿಗೆ ಅಪ್ಪಣೆ ಕೊಡದೆ ಇದ್ದುದರಿಂದ, ಇವರು ಅವರನ್ನು ಬಿಟ್ಟು ತೊಲಗಿ ಅವರನ್ನು ನಾಶಮಾಡದೆ ಹೋದರು.</verse>
				<verse number="11">ಅವರು ಬಂದು, ನೀವು ನಮಗೆ ಸ್ವಾಧೀನಮಾಡಿಕೊಳ್ಳಲು ಕೊಟ್ಟ ನಿಮ್ಮ ಸ್ವಾಸ್ತ್ಯದೊಳಗಿಂದ ನಮ್ಮನ್ನು ಹೊರಡಿಸುವುದರಿಂದ ನಮಗೆ ಪ್ರತೀಕಾರ ಮಾಡುತ್ತಾರೆ.</verse>
				<verse number="12">ನಮ್ಮ ದೇವರೇ, ನೀವು ಅವರಿಗೆ ನ್ಯಾಯತೀರಿಸುವುದಿಲ್ಲವೋ? ನಮಗೆ ವಿರೋಧವಾಗಿ ಬರುವ ಈ ಮಹಾ ಗುಂಪನ್ನು ಎದುರಿಸಲು ನಮಗೆ ಶಕ್ತಿ ಇಲ್ಲ. ನಾವು ಏನು ಮಾಡಬೇಕೋ ತಿಳಿಯದು. ಆದರೆ ನಮ್ಮ ಕಣ್ಣುಗಳು ನಿಮ್ಮ ಮೇಲೆ ಇವೆ,” ಎಂದನು.</verse>
				<verse number="13">ಹೀಗೆ ಯೆಹೂದದವರೆಲ್ಲರು ತಮ್ಮ ಹೆಂಡತಿಯರು, ಮಕ್ಕಳು, ಚಿಕ್ಕವರು ಸಹಿತವಾಗಿ ಯೆಹೋವ ದೇವರ ಮುಂದೆ ನಿಂತರು.</verse>
				<verse number="14">ಆಗ ಜನಸಮೂಹದ ಮಧ್ಯದಲ್ಲಿ ಆಸಾಫನ ವಂಶದಲ್ಲಿ ಒಬ್ಬನಾದಂಥ ಲೇವಿಯನಾದ ಯಹಜಿಯೇಲನ ಮೇಲೆ ಯೆಹೋವ ದೇವರ ಆತ್ಮ ಬರಲು, ಇವನು ಮತ್ತನ್ಯನಿಗೆ ಹುಟ್ಟಿದ ಯೆಹೀಯೇಲನ ಮರಿಮಗ, ಬೆನಾಯನ ಮೊಮ್ಮಗ, ಹಾಗೂ ಜೆಕರ್ಯನ ಮಗ.</verse>
				<verse number="15">ಆಗ ಯಹಜೀಯೇಲನು, “ಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಯೆಹೋವ ದೇವರು ನಿಮಗೆ ಹೀಗೆ ಹೇಳುತ್ತಾರೆ: ಈ ಮಹಾ ಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರಬೇಡಿರಿ. ಏಕೆಂದರೆ ಯುದ್ಧವು ನಿಮ್ಮದಲ್ಲ, ದೇವರದೇ.</verse>
				<verse number="16">ನಾಳೆ ಬೆಳಿಗ್ಗೆ ನೀವು ಅವರ ವಿರೋಧವಾಗಿ ಹೋಗಿರಿ. ಅವರು ಚೀಚ್ ಎಂಬ ಕಣಿವೆಯಿಂದ ಬರುತ್ತಾರೆ. ಯೆರೂಯೇಲ್ ಮರುಭೂಮಿಯ ಮುಂಭಾಗದಲ್ಲಿರುವ ಹಳ್ಳದ ಅಂತ್ಯದಲ್ಲಿ ಅವರನ್ನು ಕಂಡುಕೊಳ್ಳುವಿರಿ.</verse>
				<verse number="17">ಇದರಲ್ಲಿ ನೀವು ಯುದ್ಧಮಾಡಲು ಅವಶ್ಯವಲ್ಲ. ನೀವು ನೆಲೆಯಾಗಿ ನಿಂತುಕೊಂಡು, ಯೆಹೋವ ದೇವರು ನಿಮಗೆ ಕೊಡುವ ಬಿಡುಗಡೆಯನ್ನು ನೋಡಿರಿ. ಯೆಹೂದದವರೇ, ಯೆರೂಸಲೇಮಿನವರೇ, ಭಯಪಡಬೇಡಿರಿ, ಹೆದರಬೇಡಿರಿ. ಮೂರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ,” ಎಂದನು.</verse>
				<verse number="18">ಆಗ ಯೆಹೋಷಾಫಾಟನು ತನ್ನ ಮುಖವನ್ನು ನೆಲಕ್ಕೆ ಬಾಗಿಸಿದನು. ಯೆಹೂದದವರೆಲ್ಲರೂ, ಯೆರೂಸಲೇಮಿನ ನಿವಾಸಿಗಳೆಲ್ಲರೂ ಯೆಹೋವ ದೇವರ ಮುಂದೆ ಅಡ್ಡಬಿದ್ದು ಯೆಹೋವ ದೇವರನ್ನು ಆರಾಧಿಸಿದರು.</verse>
				<verse number="19">ಇದಲ್ಲದೆ ಕೊಹಾತ್ಯರ ಮಕ್ಕಳಲ್ಲಿಯೂ, ಕೋರಹೀಯರ ಮಕ್ಕಳಲ್ಲಿರುವ ಲೇವಿಯರು ಗಟ್ಟಿಯಾಗಿ ದೊಡ್ಡ ಶಬ್ದದಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಸ್ತುತಿಸಲು ಎದ್ದು ನಿಂತರು.</verse>
				<verse number="20">ಅವರು ಉದಯದಲ್ಲಿ ಎದ್ದು ತೆಕೋವದ ಮರುಭೂಮಿಗೆ ಹೊರಟರು. ಅವರು ಹೊರಟು ಹೋಗುತ್ತಿರುವಾಗ ಯೆಹೋಷಾಫಾಟನು ನಿಂತುಕೊಂಡು, “ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಯೆಹೋವ ದೇವರನ್ನು ನಂಬಿ ಸ್ಥಿರವಾಗಿರಿ. ದೇವರ ಪ್ರವಾದಿಗಳನ್ನು ನಂಬಿರಿ, ಆಗ ಜಯ ಹೊಂದುವಿರಿ,” ಎಂದನು.</verse>
				<verse number="21">ಜನರ ಸಂಗಡ ಆಲೋಚನೆ ಮಾಡಿದ ತರುವಾಯ ಯೆಹೋಷಾಫಾಟನು, ಪರಿಶುದ್ಧತ್ವದ ವೈಭವದಿಂದ ಯೆಹೋವ ದೇವರಿಗೆ ಹಾಡುವಂತೆ ಸಂಗೀತಗಾರರನ್ನು ನೇಮಿಸಿದನು. ಅವರು ಸೈನ್ಯದ ಮುಂದೆ ಹೋಗುತ್ತಾ, “ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ. ಅವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂದು ಹಾಡುವಂತೆ ನೇಮಿಸಿದನು.</verse>
				<verse number="22">ಅವರು ಹಾಡುವುದಕ್ಕೂ, ಸ್ತುತಿಸುವುದಕ್ಕೂ ಆರಂಭಿಸಿದಾಗಲೇ ಯೆಹೋವ ದೇವರು ಯೆಹೂದದ ಮೇಲೆ ಬಂದ ಅಮ್ಮೋನ್, ಮೋವಾಬ್, ಸೇಯೀರ್ ಪರ್ವತಗಳ ಜನರನ್ನು ಸೋಲಿಸುವುದಕ್ಕೆ ಅವರಲ್ಲಿಯೇ ಹೊಂಚಿಕೊಳ್ಳುವವರನ್ನು ಇರಿಸಿದ್ದರು.</verse>
				<verse number="23">ಅಮ್ಮೋನಿಯರು, ಮೋವಾಬ್ಯರು ಸೇಯೀರ್ ಪರ್ವತದ ನಿವಾಸಿಗಳನ್ನು ಸಂಪೂರ್ಣವಾಗಿ ನಾಶಮಾಡಲು ನಿಂತರು. ಅವರು ಸೇಯೀರನ ನಿವಾಸಿಗಳನ್ನು ಪೂರ್ಣವಾಗಿ ವಧಿಸಿದ ತರುವಾಯ, ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.</verse>
				<verse number="24">ಯೆಹೂದದವರು ಮರುಭೂಮಿಯಲ್ಲಿರುವ ಎತ್ತರದ ಸ್ಥಳಕ್ಕೆ ಬಂದು, ಅಲ್ಲಿನ ಗುಂಪನ್ನು ನೋಡಿದಾಗ, ಅವರಲ್ಲಿ ಒಬ್ಬನೂ ಉಳಿಯದ ಹಾಗೆ ಎಲ್ಲರೂ ನೆಲಕ್ಕೆ ಬಿದ್ದು ಹೆಣಗಳಾಗಿದ್ದರು.</verse>
				<verse number="25">ಯೆಹೋಷಾಫಾಟನೂ, ಅವನ ಜನರೂ ಅವರ ವಸ್ತ್ರಗಳನ್ನೂ, ವಸ್ತುಗಳನ್ನೂ ಕೊಳ್ಳೆಮಾಡಲು ಬಂದಾಗ, ಅವರು ಹೆಣಗಳ ಬಳಿಯಲ್ಲಿ ದ್ರವ್ಯವನ್ನೂ, ಆಭರಣಗಳನ್ನೂ ಬಹಳವಾಗಿ ಕಂಡುಕೊಂಡು, ತಾವು ಒಯ್ಯಲಿಕ್ಕಾಗದಷ್ಟು ಹೆಚ್ಚಾಗಿ ಸುಲಿದುಕೊಂಡರು. ಕೊಳ್ಳೆಯು ಅಷ್ಟು ಅಧಿಕವಾದುದರಿಂದ ಅದನ್ನು ಮೂರು ದಿವಸಗಳವರೆಗೂ ಸುಲಿದುಕೊಳ್ಳುತ್ತಾ ಇದ್ದರು.</verse>
				<verse number="26">ನಾಲ್ಕನೆಯ ದಿವಸದಲ್ಲಿ ಅವರು ಬೆರಾಕವೆಂಬ ತಗ್ಗಿನಲ್ಲಿ ಕೂಡಿಕೊಂಡರು. ಅಲ್ಲಿ ಯೆಹೋವ ದೇವರನ್ನು ಸ್ತುತಿಸಿದರು. ಆದಕಾರಣ ಇಂದಿನವರೆಗೂ ಆ ಸ್ಥಳಕ್ಕೆ ಬೆರಾಕ ತಗ್ಗು ಎಂದು ಕರೆಯುತ್ತಾರೆ.</verse>
				<verse number="27">ಯೆಹೋವ ದೇವರು ಅವರ ಶತ್ರುಗಳ ಮೇಲೆ ಅವರು ಸಂತೋಷಪಡುವಂತೆ ಮಾಡಿದ್ದರಿಂದ, ಅವರು ಹರ್ಷಗೊಂಡು ಯೆರೂಸಲೇಮಿಗೆ ತಿರುಗಿ ಹೋಗುವುದಕ್ಕೆ ಯೆಹೂದ ಮತ್ತು ಯೆರೂಸಲೇಮಿನವರ ಮುಂಭಾಗದಲ್ಲಿ ಯೆಹೋಷಾಫಾಟನೂ ಹೊರಟು,</verse>
				<verse number="28">ಸ್ವರಮಂಡಲ, ಕಿನ್ನರಿ, ತುತೂರಿ ಇವುಗಳೊಡನೆ ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಬಂದರು.</verse>
				<verse number="29">ಯೆಹೋವ ದೇವರು ಇಸ್ರಾಯೇಲರ ಶತ್ರುಗಳ ಮೇಲೆ ಯುದ್ಧ ಮಾಡಿದರೆಂದು ಜನರು ಕೇಳಿದಾಗ, ದೇವರ ಭಯವು ಆ ದೇಶದಲ್ಲಿ ಸಕಲ ರಾಜ್ಯಗಳ ಮೇಲೆ ಇತ್ತು.</verse>
				<verse number="30">ಹೀಗೆ ಯೆಹೋಷಾಫಾಟನ ರಾಜ್ಯವು ಶಾಂತವಾಗಿತ್ತು. ಅವನ ದೇವರು ಸುತ್ತಲೂ ಅವನಿಗೆ ವಿಶ್ರಾಂತಿಕೊಟ್ಟರು.</verse>
				<verse number="31">ಯೆಹೋಷಾಫಾಟನು ಯೆಹೂದ್ಯರ ಮೇಲೆ ಆಳಿದನು. ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿದ್ದನು. ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ.</verse>
				<verse number="32">ಅವನು ತನ್ನ ತಂದೆ ಆಸನ ಮಾರ್ಗಗಳಲ್ಲಿ ನಡೆದು, ಅದನ್ನು ಬಿಟ್ಟು ತೊಲಗದೇ, ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.</verse>
				<verse number="33">ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ. ಜನರು ಅವರ ಹೃದಯಗಳನ್ನು ತಮ್ಮ ಪಿತೃಗಳ ದೇವರ ಕಡೆಗೆ ಇನ್ನೂ ಸ್ಥಿರ ಮಾಡಿಕೊಂಡಿರಲಿಲ್ಲ.</verse>
				<verse number="34">ಯೆಹೋಷಾಫಾಟನ ಇತರ ಕ್ರಿಯೆಗಳು, ಆರಂಭದಿಂದ ಅಂತ್ಯದವರೆಗೆ, ಇಸ್ರಾಯೇಲರ ಅರಸುಗಳ ಗ್ರಂಥದಲ್ಲಿ, ಅಂದರೆ, ಹನಾನೀಯ ಮಗನಾದ ಯೇಹುವಿನ ಗ್ರಂಥದಲ್ಲಿ ಬರೆದಿರುತ್ತವೆ.</verse>
				<verse number="35">ಇದರ ತರುವಾಯ ಯೆಹೂದದ ಅರಸನಾದ ಯೆಹೋಷಾಫಾಟನು, ಬಹು ದುಷ್ಟನಾಗಿ ನಡೆದ ಇಸ್ರಾಯೇಲಿನ ಅರಸನಾದ ಅಹಜ್ಯನ ಸಂಗಡ ಒಪ್ಪಂದ ಮಾಡಿಕೊಂಡನು.</verse>
				<verse number="36">ಇದಲ್ಲದೆ ತಾರ್ಷೀಷಿಗೆ ಹೋಗುವುದಕ್ಕಾಗಿ ಹಡಗುಗಳನ್ನು ಮಾಡಿಸಲು, ಅವನ ಸಂಗಡ ಒಪ್ಪಂದ ಮಾಡಿಕೊಂಡು ಎಚ್ಯೋನ್ ಗೆಬೆರಿನಲ್ಲಿ ಹಡಗುಗಳನ್ನು ಮಾಡಿಸಿದರು.</verse>
				<verse number="37">ಆಗ ಮಾರೇಷಾ ಊರಿನ ದೋದವಾಹುವಿನ ಮಗನಾದ ಎಲೀಯೆಜೆರನು ಯೆಹೋಷಾಫಾಟನಿಗೆ ವಿರೋಧವಾಗಿ ಪ್ರವಾದಿಸಿ, “ನೀನು ಅಹಜ್ಯನ ಸಂಗಡ ಒಪ್ಪಂದ ಮಾಡಿಕೊಂಡಿದ್ದರಿಂದ, ಯೆಹೋವ ದೇವರು ನೀನು ಮಾಡಿದವುಗಳನ್ನು ನಾಶಮಾಡುವರು,” ಎಂದು ಹೇಳಿದನು. ಅದರಂತೆಯೇ, ಆ ಹಡಗುಗಳು ತಾರ್ಷೀಷಿಗೆ ಹೋಗದೆ ಒಡೆದುಹೋದವು.</verse>
			</chapter>
			<chapter number="21">
				<verse number="1">ಯೆಹೋಷಾಫಾಟನು ಮೃತನಾಗಿ ತನ್ನ ಪಿತೃಗಳ ಜೊತೆ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಪೂರ್ವಜರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಆಗ ಅವನಿಗೆ ಬದಲಾಗಿ ಅವನ ಮಗನಾದ ಯೆಹೋರಾಮನು ಅರಸನಾದನು.</verse>
				<verse number="2">ಇವನ ಸಹೋದರರಾಗಿರುವ ಯೆಹೋಷಾಫಾಟನ ಪುತ್ರರಾದ ಅಜರ್ಯನೂ, ಯೆಹೀಯೇಲನೂ, ಜೆಕರ್ಯನೂ, ಅಜರ್ಯನೂ, ಮೀಕಾಯೇಲನೂ, ಶೆಫಟ್ಯನೂ ಇದ್ದರು. ಇವರೆಲ್ಲರು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಪುತ್ರರು.</verse>
				<verse number="3">ಅವರ ತಂದೆ ಯೆಹೂದದಲ್ಲಿ ಕೋಟೆಯುಳ್ಳ ಪಟ್ಟಣಗಳ ಸಂಗಡ ಬೆಳ್ಳಿಯನ್ನೂ, ಬಂಗಾರವನ್ನೂ, ಬೆಲೆಯುಳ್ಳ ವಸ್ತುಗಳನ್ನೂ ಅವರಿಗೆ ದಾನಗಳಾಗಿ ಕೊಟ್ಟನು. ಆದರೆ ಯೆಹೋರಾಮನು ಚೊಚ್ಚಲ ಮಗನಾದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.</verse>
				<verse number="4">ಯೆಹೋರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ, ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ, ಇಸ್ರಾಯೇಲಿನ ಪ್ರಧಾನರಲ್ಲಿ ಕೆಲವರನ್ನೂ ಖಡ್ಗದಿಂದ ಕೊಂದುಹಾಕಿದನು.</verse>
				<verse number="5">ಯೆಹೋರಾಮನು ಆಳಲಾರಂಭಿಸಿದಾಗ ಮೂವತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು.</verse>
				<verse number="6">ಅಹಾಬನ ಮಗಳು ಅವನಿಗೆ ಹೆಂಡತಿಯಾಗಿದ್ದರಿಂದ ಅವನು ಅಹಾಬನ ಮನೆಯವರು ನಡೆದ ಹಾಗೆ ಇಸ್ರಾಯೇಲರ ಅರಸರ ಮಾರ್ಗವನ್ನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.</verse>
				<verse number="7">ಆದರೆ ಯೆಹೋವ ದೇವರು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿದ ಕಾರಣ, ದೇವರು ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.</verse>
				<verse number="8">ಯೆಹೋರಾಮನ ದಿನಗಳಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿಬಿದ್ದು, ತಮ್ಮ ಅರಸನನ್ನು ತಾವೇ ನೇಮಿಸಿಕೊಂಡರು.</verse>
				<verse number="9">ಆಗ ಯೆಹೋರಾಮನು ತನ್ನ ಪ್ರಧಾನರ ಸಂಗಡ, ಎಲ್ಲಾ ರಥಬಲವನ್ನು ತೆಗೆದುಕೊಂಡುಹೋಗಿ, ರಾತ್ರಿಯಲ್ಲಿ ಎದ್ದು, ತನ್ನನ್ನೂ, ತನ್ನ ರಥಗಳ ಅಧಿಪತಿಗಳನ್ನೂ ಸುತ್ತುವರೆದಿದ್ದ ಎದೋಮ್ಯರನ್ನು ಸೋಲಿಸಿದನು.</verse>
				<verse number="10">ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಅದೇ ಕಾಲದಲ್ಲಿ ಯೆಹೋರಾಮನು ತನ್ನ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು.</verse>
				<verse number="11">ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಪೂಜಾಸ್ಥಳಗಳನ್ನು ಮಾಡಿ, ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ, ಹಾಗೆಯೇ ಮಾಡಲು ಯೆಹೂದದವರನ್ನು ಬಲವಂತ ಮಾಡಿದನು.</verse>
				<verse number="12">ಆದಕಾರಣ ಪ್ರವಾದಿಯಾದ ಎಲೀಯನಿಂದ ಅವನಿಗೆ ಒಂದು ಪತ್ರವು ಬಂತು. ಅದರಲ್ಲಿ ಅವನು, “ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗಗಳಲ್ಲಿಯೂ, ಯೆಹೂದದ ಅರಸನಾದ ಆಸನ ಮಾರ್ಗಗಳಲ್ಲಿಯೂ ನಡೆಯದೆ,</verse>
				<verse number="13">ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು, ಅಹಾಬನ ಮನೆಯವರು ದೇವದ್ರೋಹ ಮಾಡಿದಂತೆ, ಯೆಹೂದದವರನ್ನೂ, ಯೆರೂಸಲೇಮಿನ ನಿವಾಸಿಗಳನ್ನೂ ದ್ರೋಹ ಮಾಡಲು ಪ್ರೇರೇಪಿಸಿ, ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆಯವರಾದ ನಿನ್ನ ಸಹೋದರರನ್ನು ಕೊಂದುಹಾಕಿದ್ದರಿಂದ,</verse>
				<verse number="14">ಯೆಹೋವ ದೇವರು ದೊಡ್ಡ ಬಾಧೆಯಿಂದ ನಿನ್ನ ಜನರನ್ನೂ, ನಿನ್ನ ಮಕ್ಕಳನ್ನೂ, ನಿನ್ನ ಹೆಂಡತಿಯರನ್ನೂ, ನಿನ್ನ ಸಮಸ್ತ ಸ್ಥಿತಿಯನ್ನೂ ಬಾಧಿಸುತ್ತಾರೆ.</verse>
				<verse number="15">ಇದಲ್ಲದೆ ದಿನದಿನಕ್ಕೆ ರೋಗ ಅನುಭವಿಸುವುದರಿಂದ ನಿನ್ನ ಕರುಳುಗಳು ಹೊರಕ್ಕೆ ಬರುವವರೆಗೆ ಕರುಳುಬೇನೆಯ ರೋಗದಿಂದ ನಿನಗೆ ಕಠಿಣರೋಗ ಬರುವುದು,’ ” ಎಂದು ಬರೆದಿದ್ದನು.</verse>
				<verse number="16">ಇದಲ್ಲದೆ ಕೂಷ್ಯರ ಬಳಿಯಲ್ಲಿದ್ದ ಫಿಲಿಷ್ಟಿಯರ ಮತ್ತು ಅರಬಿಯರ ಮನಸ್ಸನ್ನು ಯೆಹೋರಾಮನಿಗೆ ವಿರೋಧವಾಗಿ ಯೆಹೋವ ದೇವರು ಎಬ್ಬಿಸಿದರು.</verse>
				<verse number="17">ಆಗ ಅವರು ಯೆಹೂದದ ಮೇಲೆ ಬಂದು ಅದರಲ್ಲಿ ನುಗ್ಗಿ, ಅರಸನ ಅರಮನೆಯಲ್ಲಿ ಸಿಕ್ಕಿದ ಸಮಸ್ತ ಸ್ಥಿತಿಯನ್ನೂ, ಅವನ ಪುತ್ರರನ್ನೂ, ಅವನ ಹೆಂಡತಿಯರನ್ನೂ ತೆಗೆದುಕೊಂಡು ಹೋದರು. ಆದ್ದರಿಂದ ಅವನ ಪುತ್ರರಲ್ಲಿ ಚಿಕ್ಕವನಾದ ಯೆಹೋವಾಹಾಜನ ಹೊರತು ಅವನಿಗೆ ಪುತ್ರರು ಯಾರೂ ಉಳಿಯಲಿಲ್ಲ.</verse>
				<verse number="18">ಇದೆಲ್ಲದರ ತರುವಾಯ ಯೆಹೋವ ದೇವರು ಯೆಹೋರಾಮನ ಕರುಳುಗಳಲ್ಲಿ ವಾಸಿಯಾಗಲಾರದ ರೋಗದಿಂದ ಅವನನ್ನು ಬಾಧಿಸಿದರು.</verse>
				<verse number="19">ಎರಡು ವರ್ಷವಾದ ತರುವಾಯ, ಅವನ ರೋಗದಿಂದ ಅವನ ಕರುಳುಗಳು ಹೊರಕ್ಕೆ ಬಂದವು. ಹೀಗೆ ಅವನು ಕಡುಬೇನೆಯಿಂದ ಸತ್ತನು. ಅವನ ಜನರು ಅವನ ಪಿತೃಗಳಿಗೆ ಗೌರವಕ್ಕೋಸ್ಕರ ಅಗ್ನಿಕುಂಡ ಹಚ್ಚಲಿಲ್ಲ.</verse>
				<verse number="20">ಯೆಹೋರಾಮ್ ಆಳಲಾರಂಭಿಸಿದಾಗ ಮೂವತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಎಂಟು ವರ್ಷ ಆಳಿದನು. ಅವನು ಮರಣಹೊಂದಿದಾಗ ಯಾರೂ ಶೋಕಿಸಲಿಲ್ಲ ಆದರೂ ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಗಳಲ್ಲಿ ಅಲ್ಲ.</verse>
			</chapter>
			<chapter number="22">
				<verse number="1">ಯೆರೂಸಲೇಮಿನ ನಿವಾಸಿಗಳು ಯೆಹೋರಾಮನಿಗೆ ಬದಲಾಗಿ ಅವನ ಚಿಕ್ಕ ಮಗನಾದ ಅಹಜ್ಯನನ್ನು ಅರಸನಾಗಿ ಮಾಡಿದರು. ಏಕೆಂದರೆ ಪಾಳೆಯಕ್ಕೆ ಬಂದ ಅರಬಿಯರ ಗುಂಪು ಹಿರಿಯ ಮಕ್ಕಳನ್ನೆಲ್ಲಾ ಕೊಂದುಹಾಕಿದರು. ಹೀಗೆಯೇ ಯೆಹೋರಾಮನ ಮಗನಾದ ಅಹಜ್ಯನು ಯೆಹೂದದ ಅರಸನಾಗಿ ಆಳಲು ಆರಂಭಿಸಿದನು.</verse>
				<verse number="2">ಅಹಜ್ಯನು ಆಳಲು ಆರಂಭಿಸಿದಾಗ ಇಪ್ಪತ್ತೆರಡು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಒಂದು ವರ್ಷ ಆಳಿದನು. ಅವನ ತಾಯಿಯ ಹೆಸರು ಅತಲ್ಯಳು, ಈಕೆಯು ಒಮ್ರಿಯ ಮೊಮ್ಮಗಳು.</verse>
				<verse number="3">ಅವನ ತಾಯಿಯ ದುರ್ಬೋಧನೆಯಿಂದ ಅವನು ದುಷ್ಟನಾಗಿ ಅಹಾಬನ ಮನೆಯವರ ಮಾರ್ಗಗಳಲ್ಲಿ ನಡೆದನು.</verse>
				<verse number="4">ಅವನು ಅಹಾಬನ ಕುಟುಂಬದಂತೆಯೇ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು, ಏಕೆಂದರೆ ಅವನ ತಂದೆಯ ಮರಣದ ನಂತರ ಅವರು ಅವನ ಸಲಹೆಗಾರರಾದರು. ಆದಕಾರಣ ಎಲ್ಲವೂ ನಾಶವಾಯಿತು.</verse>
				<verse number="5">ಅಹಜ್ಯನು ಇವರ ಯೋಚನೆಯ ಪ್ರಕಾರ ನಡೆದು, ಗಿಲ್ಯಾದಿನ ರಾಮೋತಿಗೆ ಅರಾಮಿನ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಲು ಇಸ್ರಾಯೇಲಿನ ಅರಸನಾಗಿರುವ ಅಹಾಬನ ಮಗ ಯೋರಾಮನ ಸಂಗಡ ಹೋದನು. ಆದರೆ ಅರಾಮ್ಯರು ಯೋರಾಮನನ್ನು ಹೊಡೆದು ಗಾಯಗೊಳಿಸಿದರು.</verse>
				<verse number="6">ಆದ್ದರಿಂದ ಅವನು ಅರಾಮ್ಯ ದೇಶದ ಅರಸನಾದ ಹಜಾಯೇಲನ ಮೇಲೆ ಯುದ್ಧಮಾಡಿದಾಗ, ರಾಮೋತಿನಲ್ಲಿ ತನ್ನನ್ನು ಹೊಡೆದ ಗಾಯಗಳನ್ನು ಗುಣಪಡಿಸಿಕೊಳ್ಳುವುದಕ್ಕೆ ಇಜ್ರೆಯೇಲ್ ಪಟ್ಟಣಕ್ಕೆ ತಿರುಗಿಹೋದನು. ಆಗ ಅಹಾಬನ ಮಗ ಯೋರಾಮನು ಇಜ್ರೆಯೇಲಿನಲ್ಲಿ ಅಸ್ವಸ್ಥನಾಗಿದ್ದುದರಿಂದ ಯೆಹೂದದ ಅರಸನಾಗಿರುವ ಯೆಹೋರಾಮನ ಮಗ ಅಜರ್ಯನು ಅವನನ್ನು ನೋಡಲು ಹೋದನು.</verse>
				<verse number="7">ಯೋರಾಮನ ಬಳಿಗೆ ಅಹಜ್ಯನು ಬಂದಿದ್ದರಿಂದ ಅವನಿಗೆ ಉಂಟಾದ ನಷ್ಟವು ದೇವರಿಂದ ಆಯಿತು. ಹೇಗೆಂದರೆ, ಅಹಜ್ಯನು ಬಂದ ತರುವಾಯ ಯೆಹೋವ ದೇವರು ಅಹಾಬನ ಮನೆಯನ್ನು ಕಡಿದು ಬಿಡಲು ಅಭಿಷೇಕಿಸಿದ ನಿಂಷಿಯ ಮಗ ಯೇಹುವಿಗೆ ವಿರೋಧವಾಗಿ ಯೆಹೋರಾಮನ ಸಂಗಡ ಹೊರಟರು.</verse>
				<verse number="8">ಯೇಹುವು ಅಹಾಬನ ಮನೆಯ ಮೇಲೆ ನ್ಯಾಯ ತೀರಿಸುವಂತೆ ಅವನು ಯೆಹೂದ್ಯರ ಪ್ರಧಾನರನ್ನೂ, ಅಹಜ್ಯನನ್ನು ಸೇವಿಸುತ್ತಿರುವ ಅಹಜ್ಯನ ಸಹೋದರರ ಮಕ್ಕಳನ್ನೂ ಕಂಡುಹಿಡಿದು, ಅವರನ್ನು ಕೊಂದುಹಾಕಿದನು.</verse>
				<verse number="9">ಇದಲ್ಲದೆ ಯೇಹುವು ಅಹಜ್ಯನನ್ನು ಹುಡುಕಿದನು. ಅವನು ಸಮಾರ್ಯದಲ್ಲಿ ಬಚ್ಚಿಟ್ಟುಕೊಂಡದ್ದರಿಂದ ಅವನನ್ನು ಕಂಡುಹಿಡಿದು, ಯೇಹುವಿನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನನ್ನು ವಧಿಸಿದರು. “ಇವನು ಪೂರ್ಣಹೃದಯದಿಂದ ಯೆಹೋವ ದೇವರನ್ನು ಹುಡುಕಿದ ಯೆಹೋಷಾಫಾಟನ ಮಗನು,” ಎಂದು ಹೇಳಿ ಅವನನ್ನು ಸಮಾಧಿಮಾಡಿದರು. ಹೀಗೆ ರಾಜ್ಯದ ಅಧಿಕಾರವನ್ನು ವಹಿಸಿಕೊಳ್ಳುವದಕ್ಕೆ ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.</verse>
				<verse number="10">ಅಹಜ್ಯನ ತಾಯಿಯಾದ ಅತಲ್ಯಳು ತನ್ನ ಮಗನು ಸತ್ತು ಹೋದದ್ದನ್ನು ಕಂಡಾಗ, ಅವಳು ಎದ್ದು ಯೆಹೂದನ ಮನೆಯ ರಾಜಸಂತಾನದವರನ್ನೆಲ್ಲಾ ನಾಶಮಾಡಲು ಆರಂಭಿಸಿದಳು.</verse>
				<verse number="11">ಆದರೆ ಅರಸನಾದ ಯೆಹೋರಾಮನ ಮಗಳಾದ ಯೆಹೋಷಬತಳು, ಹತರಾಗುವುದಕ್ಕಿದ್ದ ಅರಸನ ಮಕ್ಕಳ ಮಧ್ಯದಿಂದ ಅಹಜ್ಯನ ಮಗನಾದ ಯೋವಾಷನನ್ನು ಕದ್ದುಕೊಂಡು ಹೋಗಿ ಅವನನ್ನೂ ಅವನ ದಾದಿಯನ್ನೂ ಮಲಗುವ ಕೋಣೆಯಲ್ಲಿ ಬಚ್ಚಿಟ್ಟಳು. ಹೀಗೆಯೇ ಅರಸನಾದ ಯೆಹೋರಾಮನ ಪುತ್ರಿಯರಾಗಿರುವ ಯಾಜಕನಾದ ಯೆಹೋಯಾದಾವನ ಹೆಂಡತಿಯಾಗಿರುವ ಅಹಜ್ಯನ ಸಹೋದರಿಯಾದ ಯೆಹೋಷಬತಳು, ಅತಲ್ಯಳು ಅವನನ್ನು ಕೊಲ್ಲದ ಹಾಗೆ ಬಚ್ಚಿಟ್ಟಳು.</verse>
				<verse number="12">ಹೀಗೆಯೇ ಇವನು ಅವರ ಸಂಗಡ ಆರು ವರ್ಷ ದೇವರ ಆಲಯದಲ್ಲಿ ಗುಪ್ತವಾಗಿದ್ದನು. ಈ ಆರು ವರ್ಷ ಅತಲ್ಯಳು ದೇಶವನ್ನು ಆಳುತ್ತಾ ಇದ್ದಳು.</verse>
			</chapter>
			<chapter number="23">
				<verse number="1">ಏಳನೆಯ ವರ್ಷದಲ್ಲಿ ಯೆಹೋಯಾದಾವನು ತನ್ನನ್ನು ಬಲಪಡಿಸಿಕೊಂಡು ಶತಾಧಿಪತಿಗಳಾಗಿರುವ ಯೆರೋಹಾಮನ ಮಗ ಅಜರ್ಯನನ್ನೂ, ಯೆಹೋಹಾನಾನನ ಮಗ ಇಷ್ಮಾಯೇಲನನ್ನೂ, ಓಬೇದನ ಮಗ ಅಜರ್ಯನನ್ನೂ, ಅದಾಯನ ಮಗ ಮಾಸೇಯನನ್ನೂ, ಜಿಕ್ರಿಯ ಮಗ ಎಲಿಷಾಫಾಟನನ್ನೂ ಕರೆದುಕೊಂಡು, ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು.</verse>
				<verse number="2">ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿಯರನ್ನೂ, ಇಸ್ರಾಯೇಲಿನ ಕುಟುಂಬದಲ್ಲಿ ಮುಖ್ಯಸ್ಥರನ್ನೂ ಕೂಡಿಸಿಕೊಂಡು, ಯೆರೂಸಲೇಮಿಗೆ ಬಂದರು.</verse>
				<verse number="3">ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರಸನ ಸಂಗಡ ಒಡಂಬಡಿಕೆಯನ್ನು ಮಾಡಿದರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು, ಯೆಹೋವ ದೇವರು ದಾವೀದನ ವಂಶದವರ ಬಗ್ಗೆ ಮಾಡಿದ ವಾಗ್ದಾನಕ್ಕೆ ಅನುಸಾರವಾಗಿ ಆಳತಕ್ಕವನು ಇವನೇ.</verse>
				<verse number="4">ಈಗ ನೀವು ಮಾಡಬೇಕಾದದ್ದೇನೆಂದರೆ, ಸಬ್ಬತ್ ದಿನದಲ್ಲಿ ಪ್ರವೇಶಿಸುವ ಯಾಜಕರೂ, ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಒಂದು ಭಾಗವು ದ್ವಾರಪಾಲಕರಾಗಿರಬೇಕು.</verse>
				<verse number="5">ಇನ್ನೊಂದು ಭಾಗವು ಅರಮನೆಯನ್ನೂ, ಮತ್ತೊಂದು ಭಾಗವು ಅಸ್ತಿವಾರದ ಬಾಗಿಲನ್ನೂ, ಇತರ ಸಮಸ್ತ ಜನರೂ ಯೆಹೋವ ದೇವರ ಆಲಯದ ಅಂಗಳದಲ್ಲಿಯೂ ಇರಬೇಕು.</verse>
				<verse number="6">ಆದರೆ ಯಾಜಕರೂ, ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಬೇರೆ ಯಾರೂ ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪ್ರತಿಷ್ಠಿತರಾದುದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಯೆಹೋವ ದೇವರ ಆಜ್ಞಾನುಸಾರವಾಗಿ ಹೊರಗಿರಬೇಕು.</verse>
				<verse number="7">ಇದಲ್ಲದೆ ಲೇವಿಯರಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ಇರಬೇಕು. ಇವರ ಹೊರತು ಯಾವನಾದರೂ ಆಲಯದಲ್ಲಿ ಬಂದರೆ, ಅವನನ್ನು ಸಂಹರಿಸಬೇಕು. ಆದರೆ ಅರಸನು ಒಳಗೆ ಬರುವಾಗಲೂ, ಹೊರಗೆ ಹೋಗುವಾಗಲೂ ನೀವು ಅವನ ಜೊತೆಯಲ್ಲಿಯೇ ಇರಬೇಕು,” ಎಂದು ಹೇಳಿದನು.</verse>
				<verse number="8">ಹೀಗೆಯೇ ಯಾಜಕನಾದ ಯೆಹೋಯಾದಾವನು ಆಜ್ಞಾಪಿಸಿದ ಪ್ರಕಾರ ಲೇವಿಯರೂ ಸಮಸ್ತ ಯೆಹೂದದವರೂ ಮಾಡಿದರು. ಪ್ರತಿ ಮನುಷ್ಯನು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಬರತಕ್ಕ ಸಿಪಾಯಿಗಳನ್ನು ಕೂಡಿಸಿಕೊಂಡನು. ಏಕೆಂದರೆ ಯಾಜಕನಾದ ಯೆಹೋಯಾದನು ಸೇವಾವಿಮುಕ್ತರಾದ ವರ್ಗದವರನ್ನು ಕಳುಹಿಸಿಬಿಡಲಿಲ್ಲ.</verse>
				<verse number="9">ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ, ದೊಡ್ಡ ಮತ್ತು ಸಣ್ಣ ಗುರಾಣಿಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು,</verse>
				<verse number="10">ಆಯುಧಗಳನ್ನು ಕೈಯಲ್ಲಿ ಹಿಡಿದುಕೊಂಡಿದ್ದ ಸಮಸ್ತ ಜನರನ್ನೂ ಬಲಿಪೀಠದ ಬಳಿಯಲ್ಲಿಯೂ, ಆಲಯದ ಬಳಿಯಲ್ಲಿಯೂ, ಆಲಯದ ಬಲಗಡೆಯ ಮೊದಲುಗೊಂಡು ಆಲಯದ ಎಡಗಡೆಯವರೆಗೂ ಅರಸನ ಸುತ್ತಲೂ ಇರಿಸಿದನು.</verse>
				<verse number="11">ಆಗ ಯೆಹೋಯಾದಾವನು ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅವನನ್ನು ಅರಸನನ್ನಾಗಿ ಘೋಷಿಸಿ, ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.</verse>
				<verse number="12">ಆದರೆ ಅರಸನನ್ನು ಹರಸುತ್ತಾ, ಓಡುತ್ತಾ ಇದ್ದ ಜನರ ಶಬ್ದವನ್ನು ಅತಲ್ಯಳು ಕೇಳಿದಾಗ, ಅವಳು ಯೆಹೋವ ದೇವರ ಆಲಯದಲ್ಲಿ ಜನರ ಬಳಿಗೆ ಬಂದಳು.</verse>
				<verse number="13">ಅರಸನು ಪ್ರವೇಶಿಸುವ ಸ್ಥಳದಲ್ಲಿ ತನ್ನ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ, ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಹಾಗೆಯೇ ಹಾಡುಗಾರರು ಗೀತವಾದ್ಯಗಳನ್ನು ಹಿಡಿದು ಸ್ತುತಿಸುವವರೂ ಬೋಧಿಸುವವರೂ ಇದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ,” ಎಂದು ಕೂಗಿದಳು.</verse>
				<verse number="14">ಆಗ ಯಾಜಕನಾದ ಯೆಹೋಯಾದಾವನು ಸೈನ್ಯದ ಮೇಲೆ ಇರುವ ಶತಾಧಿಪತಿಗಳನ್ನು ಹೊರಗೆ ಕರೆತಂದು ಅವರಿಗೆ, “ಅವಳನ್ನು ಯೆಹೋವ ದೇವರ ಆಲಯದಲ್ಲಿ ಕೊಲ್ಲಬೇಡಿರಿ, ಎರಡು ಸಾಲು ಸಿಪಾಯಿಗಳು ಅವಳನ್ನು ನಡುವೆ ಸಾಗಿಸಿಕೊಂಡು ಹೋಗಿ ಹೊರಗೆ ತಳ್ಳಲಿ ಮತ್ತು ಅವಳನ್ನು ಹಿಂಬಾಲಿಸುವಂಥವರನ್ನು ಖಡ್ಗದಿಂದ ಕೊಂದುಹಾಕಿರಿ,” ಎಂದು ಆಜ್ಞಾಪಿಸಿದನು.</verse>
				<verse number="15">ಆಗ ಅವರು ಅವಳನ್ನು ಅಧೀನಕ್ಕೆ ತೆಗೆದುಕೊಂಡು, ಅರಮನೆಯ ಬಳಿಯಲ್ಲಿ ಕುದುರೆ ಬಾಗಿಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದುಹಾಕಿದರು.</verse>
				<verse number="16">ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ತನಗೂ, ಸಮಸ್ತ ಜನರಿಗೂ, ಅರಸನಿಗೂ ಒಡಂಬಡಿಕೆ ಮಾಡಿಸಿದನು.</verse>
				<verse number="17">ಸಮಸ್ತ ಜನರು ಬಾಳನ ದೇವಸ್ಥಾನಕ್ಕೆ ಹೋಗಿ ಅದನ್ನು ಕೆಡವಿಹಾಕಿ, ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು, ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು.</verse>
				<verse number="18">ಆಗ ಯೆಹೋಯಾದಾವನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವ ದೇವರ ಆಲಯದ ಪರಿಚಾರಕರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವ ದೇವರ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ಬೇರ್ಪಡಿಸಿದ್ದನು. ದಾವೀದನಿಂದ ನೇಮಕವಾದ ಪ್ರಕಾರ ಸಂತೋಷದಿಂದ ಹಾಡುತ್ತಾ ಮೋಶೆಯ ನಿಯಮದಲ್ಲಿ ಬರೆದಿರುವಂತೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸುವುದು ಅವರ ಕರ್ತವ್ಯವಾಗಿತ್ತು.</verse>
				<verse number="19">ಯೆಹೋವ ದೇವರ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಿಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿದನು.</verse>
				<verse number="20">ಅವನು ಶತಾಧಿಪತಿಗಳನ್ನೂ, ಗೌರವಸ್ಥರನ್ನೂ, ಜನರ ಅಧಿಪತಿಗಳನ್ನೂ, ದೇಶದ ಜನರೆಲ್ಲರನ್ನೂ ಕರೆದುಕೊಂಡು ಹೋಗಿ, ಅರಸನನ್ನು ಯೆಹೋವ ದೇವರ ಆಲಯದಿಂದ ಕರೆತಂದನು. ಅವರು ಹೆಬ್ಬಾಗಿಲಿನಿಂದ ಅರಮನೆಗೆ ಬಂದು, ಅರಸನನ್ನು ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದರು.</verse>
				<verse number="21">ಅತಲ್ಯಳನ್ನು ಖಡ್ಗದಿಂದ ಕೊಂದುಹಾಕಿದ್ದರಿಂದ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.</verse>
			</chapter>
			<chapter number="24">
				<verse number="1">ಯೋವಾಷ್ ಅರಸನಾದಾಗ ಏಳು ವರ್ಷದವನಾಗಿದ್ದನು. ಯೆರೂಸಲೇಮಿನಲ್ಲಿ ನಾಲ್ವತ್ತು ವರ್ಷ ಆಳಿದನು, ಅವನ ತಾಯಿ ಬೇರ್ಷೆಬ ಊರಿನವಳಾದ ಚಿಬ್ಯಳೆಂಬವಳು.</verse>
				<verse number="2">ಯೋವಾಷನು ಯಾಜಕನಾದ ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯೆಹೋವ ದೇವರ ಸಮ್ಮುಖದಲ್ಲಿ ಸರಿಯಾದದ್ದನ್ನು ಮಾಡಿದನು.</verse>
				<verse number="3">ಯೆಹೋಯಾದಾವನು ಯೋವಾಷನಿಗೆ ಇಬ್ಬರು ಮಹಿಳೆಯರನ್ನು ಮದುವೆಮಾಡಿಕೊಟ್ಟನು. ಅವನು ಪುತ್ರಪುತ್ರಿಯರನ್ನು ಪಡೆದನು.</verse>
				<verse number="4">ಕ್ರಮೇಣ ಯೋವಾಷನು ಯೆಹೋವ ದೇವರ ಆಲಯವನ್ನು ದುರಸ್ತು ಮಾಡುವ ಮನಸ್ಸುಳ್ಳವನಾದನು.</verse>
				<verse number="5">ಆದ್ದರಿಂದ ಅವನು ಯಾಜಕರನ್ನೂ, ಲೇವಿಯರನ್ನೂ ಕೂಡಿಸಿಕೊಂಡು ಅವರಿಗೆ, “ನೀವು ಯೆಹೂದ ಪಟ್ಟಣಗಳಿಗೆ ಹೊರಟುಹೋಗಿ ವರ್ಷ ವರ್ಷಕ್ಕೆ ನಿಮ್ಮ ದೇವರ ಆಲಯವನ್ನು ದುರಸ್ತು ಮಾಡುವುದಕ್ಕೆ ಸಮಸ್ತ ಇಸ್ರಾಯೇಲರಿಂದ ಹಣವನ್ನು ಕೂಡಿಸಿರಿ ಮತ್ತು ಕೆಲಸವನ್ನು ಶೀಘ್ರವಾಗಿ ನಡೆಸಿರಿ,” ಎಂದನು. ಆದರೂ ಲೇವಿಯರು ಅವಸರ ಮಾಡದೆ ಇದ್ದರು.</verse>
				<verse number="6">ಅರಸನು ಮುಖ್ಯಯಾಜಕನಾದ ಯೆಹೋಯಾದಾವನನ್ನು ಕರೆಕಳುಹಿಸಿ ಅವನಿಗೆ, “ಯೆಹೋವ ದೇವರ ಸೇವಕನಾದ ಮೋಶೆಯೂ, ಇಸ್ರಾಯೇಲಿನ ಸಭೆಯೂ ದೇವದರ್ಶನ ಗುಡಾರದ ನಿಮಿತ್ತ ಆಜ್ಞಾಪಿಸಿದ ಕಾಣಿಕೆಯನ್ನು ಯೆಹೂದದಿಂದಲೂ, ಯೆರೂಸಲೇಮಿನಿಂದಲೂ ಬರುವಂತೆ ಮಾಡಲು ನೀನು ಲೇವಿಯರನ್ನು ಏಕೆ ವಿಚಾರಿಸಲಿಲ್ಲ?” ಎಂದನು.</verse>
				<verse number="7">ಆ ದುಷ್ಟ ಸ್ತ್ರೀಯಾದ ಅತಲ್ಯಳ ಪುತ್ರರು ಯೆಹೋವ ದೇವರ ಆಲಯವನ್ನು ಒಡೆದುಬಿಟ್ಟು, ಯೆಹೋವ ದೇವರ ಆಲಯಕ್ಕೆ ಪ್ರತಿಷ್ಠೆ ಮಾಡಿದವುಗಳನ್ನೆಲ್ಲಾ ಬಾಳನಿಗೆ ಕೊಟ್ಟುಬಿಟ್ಟಿದ್ದರು.</verse>
				<verse number="8">ಅರಸನು ಹೇಳಿದ್ದರಿಂದ ಅವರು ಒಂದು ಪೆಟ್ಟಿಗೆಯನ್ನು ಮಾಡಿ, ಯೆಹೋವ ದೇವರ ಆಲಯದ ಬಾಗಿಲಿನ ಹೊರಗೆ ಇಟ್ಟರು.</verse>
				<verse number="9">ದೇವರ ಸೇವಕನಾದ ಮೋಶೆಯು ಮರುಭೂಮಿಯಲ್ಲಿ ಇಸ್ರಾಯೇಲರಿಗೆ ಆಜ್ಞಾಪಿಸಿದ ತೆರಿಗೆಯನ್ನು ಯೆಹೋವ ದೇವರಿಗೆ ತರಬೇಕೆಂದು ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ ಪ್ರಕಟಮಾಡಿದರು.</verse>
				<verse number="10">ಆಗ ಪ್ರಧಾನರೆಲ್ಲರೂ ಸಂತೋಷಪಟ್ಟು, ತೆರಿಗೆಯನ್ನು ತೆಗೆದುಕೊಂಡು ಬಂದು, ತುಂಬುವವರೆಗೆ ಪೆಟ್ಟಿಗೆಯೊಳಗೆ ಹಾಕಿದರು.</verse>
				<verse number="11">ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಕಛೇರಿಗೆ ತಂದಾಗಲೆಲ್ಲಾ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ, ಅರಸನ ಕಾರ್ಯದರ್ಶಿಯೂ, ಮುಖ್ಯಯಾಜಕನ ಪರಿಚಾರಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ, ತೆಗೆದುಕೊಂಡು ತಿರುಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು.</verse>
				<verse number="12">ಆಗ ಅರಸನೂ, ಯೆಹೋಯಾದಾವನೂ ಅದನ್ನು ಯೆಹೋವ ದೇವರ ಆಲಯದ ಸೇವೆಯ ಕಾರ್ಯವನ್ನು ಮಾಡುವವರಿಗೆ ಕೊಟ್ಟು ಅವರಿಂದ ಕೆಲಸ ಮಾಡಿಸಿದರು. ಯೆಹೋವ ದೇವರ ಆಲಯವನ್ನು ದುರಸ್ತಿಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ, ಬಡಗಿಯವರನ್ನೂ ಕೂಲಿಗೆ ಕರೆದುಕೊಂಡರು. ಯೆಹೋವ ದೇವರ ಆಲಯವನ್ನು ಭದ್ರ ಮಾಡುವ ನಿಮಿತ್ತ ಕಬ್ಬಿಣ, ಕಂಚಿನ ಕೆಲಸ ಮಾಡುವವರನ್ನು ಕೂಲಿಗೆ ಕರೆದುಕೊಂಡರು.</verse>
				<verse number="13">ಹೀಗೆ ಕೆಲಸದವರು ಕೆಲಸವನ್ನು ನಡೆಸಿದ್ದರಿಂದ, ಕೆಲಸವು ಅವರ ಕೈಯಿಂದ ಪೂರ್ಣವಾಯಿತು. ಅವರು ಯೆಹೋವ ದೇವರ ಆಲಯವನ್ನು ಮೊದಲಿದ್ದ ಸ್ಥಿತಿಗೆ ಅದನ್ನು ತಂದು ಭದ್ರಪಡಿಸಿದರು.</verse>
				<verse number="14">ಕೆಲಸ ಮುಗಿಸಿದ ಮೇಲೆ, ಮಿಕ್ಕ ಅರಸನ ಮುಂದೆಯೂ ಯೆಹೋಯಾದಾವನ ಮುಂದೆಯೂ ತಂದರು. ಅದರಿಂದ ಯೆಹೋವ ದೇವರ ಆಲಯಕ್ಕೋಸ್ಕರ ಬಂಗಾರ ಬೆಳ್ಳಿ ಪಾತ್ರೆಗಳಾದ ಸೇವೆಯ ಪಾತ್ರೆಗಳು, ಅರ್ಪಣೆಯ ಪಾತ್ರೆಗಳು, ಸೌಟುಗಳು ಮಾಡಲಾಗಿದ್ದವು. ಯೆಹೋಯಾದಾವನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಯೆಹೋವ ದೇವರ ಆಲಯದಲ್ಲಿ ದಹನಬಲಿಗಳನ್ನು ಅರ್ಪಿಸಿದರು.</verse>
				<verse number="15">ಯೆಹೋಯಾದಾವನು ವೃದ್ಧನಾಗಿ ಮರಣಹೊಂದಿದನು. ಅವನು ಸಾಯುವಾಗ ನೂರಾಮೂವತ್ತು ವರ್ಷಗಳುಳ್ಳವನಾಗಿದ್ದನು.</verse>
				<verse number="16">ಅವನು ದೇವರಿಗೋಸ್ಕರವಾಗಿಯೂ, ಆತನ ಆಲಯಕ್ಕೋಸ್ಕರವಾಗಿಯೂ ಇಸ್ರಾಯೇಲಿನಲ್ಲಿ ಒಳ್ಳೆಯದನ್ನು ಮಾಡಿದ್ದರಿಂದ, ಅವರು ಅವನನ್ನು ದಾವೀದನ ಪಟ್ಟಣದಲ್ಲಿ ಅರಸರ ಬಳಿಯಲ್ಲಿ ಹೂಳಿಟ್ಟರು.</verse>
				<verse number="17">ಯೆಹೋಯಾದಾವನ ಮರಣದ ತರುವಾಯ ಯೆಹೂದದ ಪ್ರಧಾನರು ಬಂದು ಅರಸನಿಗೆ ಅಡ್ಡಬಿದ್ದರು. ಆಗ ಅರಸನು ಅವರ ಮಾತನ್ನು ಕೇಳಿದನು.</verse>
				<verse number="18">ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಆಲಯವನ್ನು ಬಿಟ್ಟು, ಅಶೇರ ಸ್ತಂಭಗಳನ್ನೂ, ವಿಗ್ರಹಗಳನ್ನೂ ಸೇವಿಸಿದರು. ಆದಕಾರಣ ಅವರ ಈ ಅಪರಾಧದ ನಿಮಿತ್ತ ಯೆಹೂದ ಮತ್ತು ಯೆರೂಸಲೇಮಿನ ಮೇಲೆ ದೇವರ ಕೋಪಾಗ್ನಿಯು ಬಂತು.</verse>
				<verse number="19">ಆದರೂ ಯೆಹೋವ ದೇವರು ತನ್ನ ಕಡೆಗೆ ಅವರನ್ನು ತಿರುಗಿಸುವುದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು. ಇವರು ಅವರಿಗೆ ಸಾಕ್ಷಿಗಾಗಿ ಮಾತನಾಡಿದರು. ಆದರೂ ಅವರು ಕಿವಿಗೊಡದೆ ಹೋದರು.</verse>
				<verse number="20">ಆಗ ದೇವರ ಆತ್ಮ ಯಾಜಕ ಯೆಹೋಯಾದಾವನ ಮಗನಾದ ಜೆಕರ್ಯನ ಮೇಲೆ ಬಂದು, ಅವನು ಜನರ ಮುಂದೆ ನಿಂತು ಅವರಿಗೆ, “ನೀವು ವೃದ್ಧಿ ಹೊಂದಕೂಡದ ಹಾಗೆ ಯೆಹೋವ ದೇವರ ಆಜ್ಞೆಗಳನ್ನು ಮೀರುವುದೇನು? ನಿಮಗೆ ಶುಭವಾಗುವುದಿಲ್ಲ. ನೀವು ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ದೇವರು ಸಹ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.</verse>
				<verse number="21">ಆದ್ದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಯೆಹೋವ ದೇವರ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.</verse>
				<verse number="22">ಹಾಗೆಯೇ ಅರಸನಾದ ಯೋವಾಷನು, ಇವನ ತಂದೆಯಾದ ಯೆಹೋಯಾದಾವನು ತನಗೆ ತೋರಿಸಿದ ದಯೆಯನ್ನು ಜ್ಞಾಪಕಮಾಡದೆ ಅವನ ಮಗನನ್ನು ಕೊಂದುಹಾಕಿದನು. ಜೆಕರ್ಯನು ಸಾಯುವಾಗ, “ಯೆಹೋವ ದೇವರು ನೋಡಿ ವಿಚಾರಿಸಲಿ,” ಎಂದು ಹೇಳಿದನು.</verse>
				<verse number="23">ವರ್ಷಾಂತ್ಯದಲ್ಲಿ ಅರಾಮಿನ ಸೈನ್ಯದವರು ಅವನಿಗೆ ವಿರೋಧವಾಗಿ ಹೊರಟು, ಯೆಹೂದ ಮತ್ತು ಯೆರೂಸಲೇಮಿಗೆ ಬಂದು, ಜನರ ಪ್ರಧಾನರನ್ನು ಅವರೊಳಗಿಂದ ನಾಶಮಾಡಿ, ಅವರಿಂದ ತೆಗೆದುಕೊಂಡ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.</verse>
				<verse number="24">ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ ಅರಾಮ್ಯರು ಚಿಕ್ಕ ಗುಂಪಿನ ಸೈನ್ಯದ ಸಂಗಡ ಬಂದಿದ್ದರೂ, ಯೆಹೋವ ದೇವರು ಅವರ ಮಹಾ ಸೈನ್ಯವನ್ನು ಶತ್ರುಗಳ ಕೈಯಲ್ಲಿ ಒಪ್ಪಿಸಿದನು. ಹೀಗೆಯೇ ಯೆಹೋವ ದೇವರು ಯೋವಾಷನಿಗೆ ವಿರೋಧವಾಗಿ ತೀರ್ಪು ಮಾಡಿದರು.</verse>
				<verse number="25">ಯೋವಾಷನು ತೀವ್ರ ಗಾಯಗೊಂಡು ಬಿದ್ದಿರುವಾಗ, ಅರಾಮೀಯರು ಅವನನ್ನು ಬಿಟ್ಟುಹೋದರು. ಅವರು ಹೋದ ತರುವಾಯ ಯಾಜಕನಾದ ಯೆಹೋಯಾದಾವನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಯೋವಾಷನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಅವನ ಮಂಚದ ಮೇಲೆಯೇ ಅವನನ್ನು ಕೊಂದುಹಾಕಿದರು. ಅವರು ಯೋವಾಷನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಯಲ್ಲಿ ಅವನನ್ನು ಸಮಾಧಿಮಾಡಲಿಲ್ಲ.</verse>
				<verse number="26">ಯೋವಾಷನಿಗೆ ವಿರೋಧವಾಗಿ ಒಳಸಂಚು ಮಾಡಿದವರು ಯಾರೆಂದರೆ, ಅಮ್ಮೋನ್ ದೇಶದ ಶಿಮೆಯಾತ್ ಎಂಬಾಕೆಯ ಮಗ ಜಾಬಾದ್; ಮೋವಾಬ್ ದೇಶದ ಶಿಮ್ರೀತ್ ಎಂಬಾಕೆಯ ಮಗ ಯೆಹೋಜಾಬಾದನು.</verse>
				<verse number="27">ಆದರೆ ಅವನ ಪುತ್ರನನ್ನು ಕುರಿತೂ, ಅವನ ವಿರುದ್ಧ ನುಡಿದ ಪ್ರವಾದನೆಯ ಕುರಿತೂ, ದೇವರ ಆಲಯ ದುರಸ್ತು ಮಾಡುವುದನ್ನು ಕುರಿತೂ, ಅರಸರ ಚರಿತ್ರೆಯ ಪುಸ್ತಕದಲ್ಲಿ ಬರೆದಿರುತ್ತವೆ. ಅವನ ಮಗ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.</verse>
			</chapter>
			<chapter number="25">
				<verse number="1">ಅಮಚ್ಯನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಯೆಹೋವದ್ದಾನ್, ಅವಳು ಯೆರೂಸಲೇಮಿನವಳು.</verse>
				<verse number="2">ಅವನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೇ ಮಾಡಿದನು, ಆದರೆ ಪೂರ್ಣಹೃದಯದಿಂದಲ್ಲ.</verse>
				<verse number="3">ಅವನು ರಾಜ್ಯವನ್ನು ಸ್ಥಿರಪಡಿಸಿಕೊಂಡ ತರುವಾಯ, ಅರಸನಾಗಿದ್ದ ತನ್ನ ತಂದೆಯನ್ನು ಕೊಂದ ಸೇವಕರಿಗೆ ಮರಣದಂಡನೆಯನ್ನು ವಿಧಿಸಿದನು.</verse>
				<verse number="4">ಆದರೆ, “ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆಯ ಪಾಪಕ್ಕಾಗಿ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪದ ನಿಮಿತ್ತವೇ ಮರಣಶಿಕ್ಷೆಯನ್ನು ಹೊಂದಬೇಕು,” ಎಂದು ಯೆಹೋವ ದೇವರು ಆಜ್ಞಾಪಿಸಿದ ಮೋಶೆಯ ನಿಯಮ ಗ್ರಂಥದಲ್ಲಿ ಬರೆದಿರುವ ಪ್ರಕಾರ, ಅಮಚ್ಯನು ಕೊಲೆಗಾರರ ಮಕ್ಕಳನ್ನು ಕೊಂದುಹಾಕಲಿಲ್ಲ.</verse>
				<verse number="5">ಇದಲ್ಲದೆ ಅಮಚ್ಯನು ಯೆಹೂದದವರನ್ನು ಕೂಡಿಸಿಕೊಂಡು, ಯೆಹೂದ ಬೆನ್ಯಾಮೀನ್ಯರೆಲ್ಲರಲ್ಲಿ ತಮ್ಮ ಪಿತೃಗಳ ಮನೆಗಳ ಪ್ರಕಾರ ಅವರನ್ನು ಸಾವಿರ ಜನರ ಮೇಲೆ ಅಧಿಪತಿಗಳಾಗಿಯೂ, ನೂರು ಜನರ ಮೇಲೆ ಅಧಿಪತಿಗಳಾಗಿಯೂ ಮಾಡಿದನು. ಅವನು ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ಪ್ರಾಯವುಳ್ಳವರನ್ನು ಲೆಕ್ಕಿಸಿ ಆಯ್ದುಕೊಂಡನು. ಯುದ್ಧಕ್ಕೆ ಹೋಗತಕ್ಕಂಥ, ಈಟಿಯನ್ನೂ, ಖೇಡ್ಯವನ್ನೂ ಹಿಡಿದುಕೊಂಡಿರುವಂಥ, ಮೂರು ಲಕ್ಷ ಮಂದಿಯನ್ನು ಕೂಡಿಸಿದನು.</verse>
				<verse number="6">ಇದಲ್ಲದೆ ಇಸ್ರಾಯೇಲಿನವರಿಗೆ 3,400 ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟು, ಪರಾಕ್ರಮಶಾಲಿಗಳಾದ ಒಂದು ಲಕ್ಷ ಮಂದಿಯನ್ನು ಕೂಲಿಗೆ ತೆಗೆದುಕೊಂಡನು.</verse>
				<verse number="7">ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ, “ಅರಸನೇ, ಇಸ್ರಾಯೇಲಿನ ಸೈನ್ಯವು ನಿನ್ನ ಸಂಗಡ ಹೋಗದಿರಲಿ. ಏಕೆಂದರೆ ಯೆಹೋವ ದೇವರು ಇಸ್ರಾಯೇಲರಾದ ಎಫ್ರಾಯೀಮನ ಸಮಸ್ತ ಜನರ ಸಂಗಡ ಇರುವುದಿಲ್ಲ.</verse>
				<verse number="8">ನೀವು ಹೋಗಿ ಯುದ್ಧದಲ್ಲಿ ಧೈರ್ಯದಿಂದ ಹೋರಾಡಿದರೂ ದೇವರು ಶತ್ರುವಿನ ಮುಂದೆ ನಿನ್ನನ್ನು ಸೋಲಿಸಿಬಿಡುವರು. ಏಕೆಂದರೆ ಸಹಾಯ ಕೊಡುವುದಕ್ಕೂ, ಬೀಳ ಮಾಡುವುದಕ್ಕೂ ದೇವರಿಗೆ ಶಕ್ತಿ ಉಂಟು,” ಎಂದನು.</verse>
				<verse number="9">ಆಗ ಅಮಚ್ಯನು ದೇವರ ಮನುಷ್ಯನಿಗೆ, “ಆದರೆ ಇಸ್ರಾಯೇಲಿನ ದಂಡಿಗೆ ನಾನು ಕೊಟ್ಟ 3,400 ಕಿಲೋಗ್ರಾಂ ಬೆಳ್ಳಿಯನ್ನು ಏನು ಮಾಡಬೇಕು?” ಎಂದನು. ಅದಕ್ಕೆ ದೇವರ ಮನುಷ್ಯನು, “ಯೆಹೋವ ದೇವರು ಇದಕ್ಕಿಂತ ಅಧಿಕವಾಗಿಯೇ ನಿನಗೆ ಕೊಡಲು ಶಕ್ತರು,” ಎಂದನು.</verse>
				<verse number="10">ಆಗ ಅಮಚ್ಯನು ಎಫ್ರಾಯೀಮಿನಿಂದ ತನ್ನ ಬಳಿಗೆ ಬಂದ ಸೈನಿಕರು ತಮ್ಮ ಸ್ಥಳಕ್ಕೆ ತಿರುಗಿ ಹೋಗುವಹಾಗೆ ಅವರನ್ನು ಕಳುಹಿಸಿಬಿಟ್ಟನು. ಆದಕಾರಣ ಅವರ ಕೋಪವು ಯೆಹೂದದ ಮೇಲೆ ಬಹಳವಾಗಿ ಉರಿಯಿತು. ಅವರು ಕೋಪಗೊಂಡವರಾಗಿ ತಮ್ಮ ಮನೆಗೆ ತಿರುಗಿದರು.</verse>
				<verse number="11">ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡೆಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ, ಅಲ್ಲಿ ಸೇಯೀರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.</verse>
				<verse number="12">ಬದುಕಿದ್ದ ಬೇರೆ ಹತ್ತು ಸಾವಿರ ಮಂದಿಯನ್ನು ಯೆಹೂದ್ಯರು ಸೆರೆಯಾಗಿ ಒಯ್ದು, ಬಂಡೆಯ ಶಿಖರಕ್ಕೆ ಅವರನ್ನು ಕರೆದುಕೊಂಡು ಹೋಗಿ, ಅಲ್ಲಿಂದ ಅವರನ್ನು ದಬ್ಬಿ ಸಾಯಿಸಿದರು.</verse>
				<verse number="13">ತಮ್ಮ ಸಂಗಡ ಯುದ್ಧಕ್ಕೆ ಬಾರದ ಹಾಗೆ ಅಮಚ್ಯನು ಹಿಂದಕ್ಕೆ ಕಳುಹಿಸಿದ ಗುಂಪಿನವರು ಯೆಹೂದದ ಪಟ್ಟಣಗಳ ಮೇಲೆ ದಾಳಿಮಾಡಿ, ಸಮಾರ್ಯ ಮೊದಲುಗೊಂಡು ಬೇತ್ ಹೋರೋನಿನ ಮಟ್ಟಿಗೂ ಮೂರು ಸಾವಿರ ಮಂದಿಯನ್ನು ಕೊಂದು, ಬಹು ಕೊಳ್ಳೆಯನ್ನು ತೆಗೆದುಕೊಂಡು ಹೋದರು.</verse>
				<verse number="14">ಅಮಚ್ಯನು ಎದೋಮ್ಯರನ್ನು ಹೊಡೆದು ತಿರುಗಿ ಬಂದ ತರುವಾಯ, ಸೇಯೀರನ ಮಕ್ಕಳ ದೇವರುಗಳನ್ನು ತೆಗೆದುಕೊಂಡು ಬಂದು, ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು, ಅವುಗಳ ಮುಂದೆ ಅಡ್ಡಬಿದ್ದು, ಅವುಗಳಿಗೆ ಧೂಪವನ್ನು ಸುಟ್ಟನು.</verse>
				<verse number="15">ಆದಕಾರಣ ಯೆಹೋವ ದೇವರ ಕೋಪವು ಅಮಚ್ಯನ ಮೇಲೆ ಬಂತು. ದೇವರು ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿದರು. ಪ್ರವಾದಿಯು ಅರಸನಿಗೆ, “ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆ ಹೋದ ದೇವರುಗಳನ್ನು ನೀನು ವಿಚಾರಿಸುವುದೇನು?” ಎಂದನು.</verse>
				<verse number="16">ಪ್ರವಾದಿಯು ಅರಸನ ಸಂಗಡ ಮಾತನಾಡುತ್ತಿರುವಾಗಲೇ ಅರಸನು ಅವನಿಗೆ, “ಅರಸನ ಆಲೋಚನಾ ಮಂತ್ರಿಯನ್ನಾಗಿ ನಿನ್ನನ್ನು ನೇಮಿಸಿದವರು ಯಾರು? ಸುಮ್ಮನಿರು! ನೀನು ಏಕೆ ಮರಣಹೊಂದಬೇಕೆಂದಿರುವೆ?” ಎಂದನು. ಆಗ ಪ್ರವಾದಿಯು, “ನೀನು ನನ್ನ ಯೋಚನೆಯನ್ನು ಕೇಳದೆ ಇದನ್ನು ಮಾಡಿದ್ದರಿಂದ, ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾರೆಂದು ನಾನು ಬಲ್ಲೆನು,” ಎಂದನು.</verse>
				<verse number="17">ಆಗ ಯೆಹೂದದ ಅರಸನಾದ ಅಮಚ್ಯನು ಆಲೋಚನೆ ಕೇಳಿ, ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಇಸ್ರಾಯೇಲರ ಅರಸನಾದ ಯೋವಾಷನಿಗೆ, “ನಾವು ಒಬ್ಬರನ್ನೊಬ್ಬರು ಎದುರಿಸೋಣ ಬಾ,” ಎಂದು ದೂತರ ಮುಖಾಂತರ ಹೇಳಿ ಕಳುಹಿಸಿದನು.</verse>
				<verse number="18">ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ, “ಲೆಬನೋನಿನಲ್ಲಿದ್ದ ಮುಳ್ಳುಗಿಡವು ಲೆಬನೋನಿನಲ್ಲಿರುವ ದೇವದಾರು ಮರಕ್ಕೆ, ‘ನನ್ನ ಮಗನಿಗೆ ಹೆಂಡತಿಯಾಗಿರಲು ನೀನು ನಿನ್ನ ಮಗಳನ್ನು ಕೊಡು,’ ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿಯಿತು.</verse>
				<verse number="19">ನೀನು ಎದೋಮ್ಯರನ್ನು ಸೋಲಿಸಿ ಕೀರ್ತಿಯನ್ನು ಪಡೆದುಕೊಂಡೆನಲ್ಲಾ ಎಂದು ನಿನ್ನ ಹೃದಯವು ಗರ್ವಪಡದಿರಲಿ. ಈಗ ಮನೆಯಲ್ಲಿ ಸುಮ್ಮನೆ ಕೂತಿರು. ನೀನೂ, ನಿನ್ನ ಸಂಗಡ ಯೆಹೂದವೂ ಬಿದ್ದುಹೋಗುವಂತೆ ನಿನ್ನ ಕೇಡಿಗೆ ನೀನೇ ಕೈ ಹಾಕುವುದೇಕೆ?” ಎಂದನು.</verse>
				<verse number="20">ಆದರೆ ಅಮಚ್ಯನು ಕೇಳದೆ ಹೋದನು. ಏಕೆಂದರೆ ಯೆಹೂದ್ಯರು ಎದೋಮ್ಯರ ದೇವರುಗಳನ್ನು ಹುಡುಕಿದ ನಿಮಿತ್ತ, ಅವರನ್ನು ಯೆಹೋವಾಷನ ಕೈಯಲ್ಲಿ ಒಪ್ಪಿಸುವಂತೆ ಇದು ದೇವರಿಂದ ಆಯಿತು.</verse>
				<verse number="21">ಹಾಗೆಯೇ ಇಸ್ರಾಯೇಲಿನ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು. ಅವನೂ, ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ ಷೆಮೆಷ್ ಊರಿನ ಬಳಿಯಲ್ಲಿ ಒಬ್ಬರನ್ನೊಬ್ಬರು ಎದುರಿಸಿದರು.</verse>
				<verse number="22">ಯೆಹೂದದವರು ಇಸ್ರಾಯೇಲರ ಮುಂದೆ ಸೋತುಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಓಡಿಹೋದರು.</verse>
				<verse number="23">ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ ಷೆಮೆಷ್ ಊರಿನ ಬಳಿಯಲ್ಲಿ ವಶಪಡಿಸಿಕೊಂಡನು. ಅನಂತರ ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು, ಎಫ್ರಾಯೀಮಿನ ಬಾಗಿಲು ಮೊದಲುಗೊಂಡು, ಮೂಲೆಯ ಬಾಗಿಲವರೆಗೂ, 180 ಮೀಟರ್ ಉದ್ದದ ಯೆರೂಸಲೇಮಿನ ಗೋಡೆಯನ್ನು ಕೆಡವಿಬಿಟ್ಟನು.</verse>
				<verse number="24">ಅವನು ಓಬೇದ್ ಏದೋಮನ ಬಳಿಯಲ್ಲಿ ಯೆಹೋವ ದೇವರ ಆಲಯದಲ್ಲಿ ಸಿಕ್ಕಿದ ಸಕಲ ಬೆಳ್ಳಿಬಂಗಾರವನ್ನೂ, ಎಲ್ಲಾ ಸಲಕರಣೆಗಳನ್ನೂ, ಅರಮನೆಯ ಬೊಕ್ಕಸಗಳನ್ನೂ ಬಂಧಿತರಾದವರನ್ನೂ ತೆಗೆದುಕೊಂಡು ಸಮಾರ್ಯಕ್ಕೆ ಹಿಂದಿರುಗಿದನು.</verse>
				<verse number="25">ಇಸ್ರಾಯೇಲಿನ ಅರಸನಾದ ಯೆಹೋವಾಹಾಜನ ಮಗನಾದ ಯೆಹೋವಾಷನ ಮರಣದ ತರುವಾಯ, ಯೆಹೂದದ ಅರಸನಾದ ಯೋವಾಷನ ಮಗನಾಗಿರುವ ಅಮಚ್ಯನು ಹದಿನೈದು ವರ್ಷ ಬದುಕಿದನು.</verse>
				<verse number="26">ಅಮಚ್ಯನ ಆಳ್ವಿಕೆಯ ಇತರ ಕ್ರಿಯೆಗಳನ್ನು, ಮೊದಲನೆಯದಿಂದ ಕಡೆಯವರೆಗೆ ಯೆಹೂದ ಇಸ್ರಾಯೇಲರ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="27">ಅಮಚ್ಯನು ಯೆಹೋವ ದೇವರ ಕಡೆಯಿಂದ ತೊಲಗಿಹೋದ ತರುವಾಯ, ಯೆರೂಸಲೇಮಿನವರು ಅವನ ವಿರೋಧವಾಗಿ ಒಳಸಂಚು ಮಾಡಿದ್ದರಿಂದ, ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ, ಅಲ್ಲಿ ಅವನನ್ನು ಕೊಂದುಹಾಕಿದರು.</verse>
				<verse number="28">ಅವರು ಅವನ ಶವವನ್ನು ಕುದುರೆಗಳ ಮೇಲೆ ತೆಗೆದುಕೊಂಡು ಬಂದು, ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು.</verse>
			</chapter>
			<chapter number="26">
				<verse number="1">ಆಗ ಯೆಹೂದ ಜನರೆಲ್ಲರು ಹದಿನಾರು ವರ್ಷದವನಾದ ಉಜ್ಜೀಯನನ್ನು ತೆಗೆದುಕೊಂಡು, ಅವನನ್ನು ಅವನ ತಂದೆ ಅಮಚ್ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.</verse>
				<verse number="2">ಅರಸನು ತನ್ನ ಪಿತೃಗಳ ಜೊತೆ ಸೇರಿದ ತರುವಾಯ, ಉಜ್ಜೀಯನು ಏಲೋತ್ ಪಟ್ಟಣವನ್ನು ಕಟ್ಟಿಸಿ, ಅದನ್ನು ಯೆಹೂದಕ್ಕೆ ತಿರುಗಿ ಸೇರಿಸಿದನು.</verse>
				<verse number="3">ಉಜ್ಜೀಯನು ಅರಸನಾದಾಗ, ಹದಿನಾರು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು, ಅವಳು ಯೆರೂಸಲೇಮಿನವಳು.</verse>
				<verse number="4">ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.</verse>
				<verse number="5">ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾದ ಜೆಕರ್ಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಯೆಹೋವ ದೇವರನ್ನು ಹುಡುಕುವ ದಿವಸಗಳ ಮಟ್ಟಿಗೂ, ದೇವರು ಅವನನ್ನು ಅಭಿವೃದ್ಧಿ ಪಡಿಸಿದರು.</verse>
				<verse number="6">ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ, ಗತ್‌ನ ಗೋಡೆಯನ್ನೂ, ಯಬ್ನೆಯ ಗೋಡೆಯನ್ನೂ, ಅಷ್ಡೋದಿನ ಗೋಡೆಯನ್ನೂ ಕೆಡವಿಬಿಟ್ಟು, ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.</verse>
				<verse number="7">ಇದಲ್ಲದೆ ಫಿಲಿಷ್ಟಿಯರ ಮೇಲೆಯೂ, ಗುರ್ಬಾಳಿನಲ್ಲಿ ವಾಸವಾಗಿದ್ದ ಅರಬಿಯರ ಮೇಲೆಯೂ, ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿದಾಗ, ದೇವರು ಅವನಿಗೆ ಸಹಾಯ ಮಾಡಿದರು.</verse>
				<verse number="8">ಅಮ್ಮೋನ್ಯರು ಉಜ್ಜೀಯನಿಗೆ ಕಪ್ಪವನ್ನು ಕೊಟ್ಟರು. ಆದ್ದರಿಂದ ಅವನ ಹೆಸರು ಈಜಿಪ್ಟಿನ ಪ್ರದೇಶದವರೆಗೂ ಬಹಳವಾಗಿ ಹಬ್ಬಿತು. ಅವನು ಬಹಳವಾಗಿ ಬಲಪಡಿಸಿಕೊಂಡಿದ್ದನು.</verse>
				<verse number="9">ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಿಲ ಬಳಿಯಲ್ಲಿಯೂ, ತಗ್ಗಿನ ಬಾಗಿಲ ಬಳಿಯಲ್ಲಿಯೂ, ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು.</verse>
				<verse number="10">ತಗ್ಗಿನ ದೇಶದಲ್ಲಿಯೂ, ಬಯಲು ದೇಶದಲ್ಲಿಯೂ ಅವನಿಗೆ ಬಹು ಪಶುಗಳಿದ್ದವು. ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಹಾಗೆಯೇ ಪರ್ವತಗಳಲ್ಲಿಯೂ, ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿಗರೂ, ದ್ರಾಕ್ಷಿ ವ್ಯವಸಾಯದವರೂ ಇದ್ದರು. ಏಕೆಂದರೆ ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.</verse>
				<verse number="11">ಇದಲ್ಲದೆ ಲೇಖಕನಾದ ಯೆಹೀಯೇಲನ ಕೈಯಿಂದಲೂ, ಅಧಿಪತಿಯಾದ ಮಾಸೇಯನ ಕೈಯಿಂದ ಬರೆದಿರುವ ಲೆಕ್ಕದ ಪ್ರಕಾರ, ಗುಂಪುಗುಂಪಾಗಿ ಯುದ್ಧಕ್ಕೆ ಹೋಗುವ ಯುದ್ಧವೀರರ ಸೈನ್ಯವು ಉಜ್ಜೀಯನಿಗೆ ಇತ್ತು. ಆ ಸೈನ್ಯವು ಅರಸನ ಪ್ರಧಾನರಲ್ಲಿ ಒಬ್ಬನಾದ ಹನನ್ಯನ ಕೈಕೆಳಗೆ ಇತ್ತು.</verse>
				<verse number="12">ಪರಾಕ್ರಮಶಾಲಿಗಳಲ್ಲಿ ಕುಟುಂಬಗಳ ಮುಖ್ಯಸ್ಥರ ಲೆಕ್ಕವು 2,600 ಮಂದಿ.</verse>
				<verse number="13">ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ 3,07,500 ಮಂದಿಯುಳ್ಳ ಸೈನ್ಯವಿತ್ತು.</verse>
				<verse number="14">ಉಜ್ಜೀಯನು ಸಮಸ್ತ ದಂಡಿನಲ್ಲಿ ಅವರ ನಿಮಿತ್ತ ಗುರಾಣಿಗಳನ್ನೂ, ಈಟಿಗಳನ್ನೂ, ಶಿರಸ್ತ್ರಾಣಗಳನ್ನೂ, ಉಕ್ಕಿನ ಕವಚಗಳನ್ನೂ, ಬಿಲ್ಲುಗಳನ್ನೂ, ಕವಣೆಗಳನ್ನೂ ಸಿದ್ಧಮಾಡಿದನು.</verse>
				<verse number="15">ಇದಲ್ಲದೆ ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನೂ ಎಸೆಯುವ ನಿಮಿತ್ತ ಬುರುಜುಗಳ ಮೇಲೆಯೂ, ಮಣ್ಣುದಿಬ್ಬಗಳ ಮೇಲೆಯೂ ಇರಲು, ಪ್ರವೀಣರಿಂದ ಮಾಡಿದ ಯಂತ್ರಗಳನ್ನೂ ಯೆರೂಸಲೇಮಿನಲ್ಲಿ ಮಾಡಿಸಿದನು. ಆದ್ದರಿಂದ ಅವನ ಹೆಸರು ಬಹಳ ದೂರದವರೆಗೆ ಪ್ರಸಿದ್ಧಿಯಾಯಿತು. ಬಹು ಬಲಿಷ್ಠನಾಗುವ ಪರ್ಯಂತರ ಅವನು ಬಹು ಆಶ್ಚರ್ಯಕರವಾಗಿ ಸಹಾಯ ಪಡೆಯುತ್ತಿದ್ದನು.</verse>
				<verse number="16">ಆದರೆ ಅವನು ಬಲ ಹೊಂದಿದ ಮೇಲೆ ಅವನ ಗರ್ವವು ನಾಶಕ್ಕೆ ನಡೆಸಿತು. ಅವನು ಧೂಪಪೀಠದ ಮೇಲೆ ಧೂಪಸುಡುವುದಕ್ಕೂ, ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಪರಾಧ ಮಾಡಿದನು.</verse>
				<verse number="17">ಆಗ ಯಾಜಕನಾದ ಅಜರ್ಯನೂ, ಅವನ ಸಂಗಡ ಯೆಹೋವ ದೇವರ ಪರಾಕ್ರಮವುಳ್ಳ ಯಾಜಕರಾದ ಎಂಬತ್ತು ಮಂದಿಯೂ ಅರಸನಾದ ಉಜ್ಜೀಯನ ಹಿಂದೆ ಪ್ರವೇಶಿಸಿ,</verse>
				<verse number="18">ಅವನನ್ನು ಎದುರಿಸಿ, “ಉಜ್ಜೀಯನೇ, ಯೆಹೋವ ದೇವರಿಗೆ ಧೂಪ ಸುಡುವುದು ಪ್ರತಿಷ್ಠಿತರಾದ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು. ನೀನು ಪರಿಶುದ್ಧ ಸ್ಥಳದಿಂದ ಹೊರಟು ಹೋಗು, ಅಪರಾಧ ಮಾಡಿದೆ. ದೇವರಾದ ಯೆಹೋವ ದೇವರಿಂದ ನಿನಗೆ ಗೌರವ ದೊರಕದು,” ಎಂದನು.</verse>
				<verse number="19">ಆಗ ಉಜ್ಜೀಯನು ಕೋಪಿಸಿಕೊಂಡನು. ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಆದರೆ ಅವನು ಯಾಜಕರ ಮೇಲೆ ಕೋಪ ಮಾಡುತ್ತಿರುವಾಗಲೇ, ಯೆಹೋವ ದೇವರ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಬಂದಿತು.</verse>
				<verse number="20">ಆಗ ಮುಖ್ಯಯಾಜಕನಾದ ಅಜರ್ಯನೂ, ಯಾಜಕರೆಲ್ಲರೂ ಅವನನ್ನು ದೃಷ್ಟಿಸಿ ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಂಡುಬಂದದ್ದರಿಂದ ಅವರು ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಹಾಕಿದರು. ಯೆಹೋವ ದೇವರು ತನ್ನನ್ನು ಬಾಧಿಸಿದ್ದರಿಂದ ಅವನು ಸ್ವತಃ ಹೊರಗೆ ಹೋಗಲು ತ್ವರೆಪಟ್ಟನು.</verse>
				<verse number="21">ಅರಸನಾದ ಉಜ್ಜೀಯನು ಮರಣದ ದಿವಸದವರೆಗೂ ಕುಷ್ಠರೋಗಿಯಾಗಿದ್ದು ಯೆಹೋವ ದೇವರ ಆಲಯದಿಂದ ಬಹಿಷ್ಕೃತನಾದನು. ಅವನು ಕುಷ್ಠರೋಗದ ನಿಮಿತ್ತ ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅವನ ಮಗ ಯೋತಾಮನು ರಾಜಗೃಹಾಧಿಪತ್ಯವನ್ನು ಮತ್ತು ಪ್ರಜಾಪಾಲನೆಯನ್ನೂ ನೋಡಿಕೊಳ್ಳುತ್ತಿದ್ದನು.</verse>
				<verse number="22">ಉಜ್ಜೀಯನ ಇತರ ಕ್ರಿಯೆಗಳನ್ನು, ಮೊದಲನೆಯದಿಂದ ಕಡೆಯವರೆಗೆ ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದನು.</verse>
				<verse number="23">ಉಜ್ಜೀಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನು ಕುಷ್ಠರೋಗಿಯಾಗಿದ್ದರಿಂದ, ಅವರು ಅವನ ಶವವನ್ನು ರಾಜಕುಟುಂಬದ ಸ್ಮಶಾನ ಭೂಮಿಯ ಹತ್ತಿರದ ಹೊಲದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.</verse>
			</chapter>
			<chapter number="27">
				<verse number="1">ಯೋತಾಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷ ಅವನ ತಾಯಿ.</verse>
				<verse number="2">ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು. ಆದರೆ ಅವನ ತಂದೆಯಂತೆ ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಲಿಲ್ಲ. ಆಗ ಜನರು ಇನ್ನೂ ಕೆಟ್ಟದ್ದನ್ನು ಮಾಡುತ್ತಾ ಇದ್ದರು.</verse>
				<verse number="3">ಅವನು ಯೆಹೋವ ದೇವರ ಆಲಯದ ಮೇಲಿನ ಬಾಗಿಲನ್ನು ಕಟ್ಟಿಸಿ, ಓಫೇಲ್ ಗೋಡೆಯನ್ನು ಎತ್ತರವಾಗಿ ಕಟ್ಟಿಸಿದನು.</verse>
				<verse number="4">ಇದಲ್ಲದೆ ಯೆಹೂದ ಪರ್ವತ ಪ್ರದೇಶದಲ್ಲಿ ಪಟ್ಟಣಗಳನ್ನೂ ಕಾಡುಗಳ ಪ್ರದೇಶದಲ್ಲಿ ಕೋಟೆಗಳನ್ನೂ ಬುರುಜುಗಳನ್ನೂ ಕಟ್ಟಿಸಿದನು.</verse>
				<verse number="5">ಯೋತಾಮನು ಅಮ್ಮೋನ್ಯರ ಅರಸನ ಸಂಗಡ ಯುದ್ಧಮಾಡಿ ಅವನನ್ನು ಜಯಿಸಿದನು. ಆದ್ದರಿಂದ ಅಮ್ಮೋನಿಯರು ಅದೇ ವರ್ಷದಲ್ಲಿ 3,400 ಕಿಲೋಗ್ರಾಂ ಬೆಳ್ಳಿ, 1,600 ಮೆಟ್ರಿಕ್ ಟನ್ ಗೋಧಿ, 1,350 ಮೆಟ್ರಿಕ್ ಟನ್ ಜವೆಗೋಧಿಯನ್ನೂ ಅವನಿಗೆ ಕೊಟ್ಟರು. ಅಮ್ಮೋನಿಯರು ಎರಡನೆಯ ವರ್ಷದಲ್ಲಿಯೂ, ಮೂರನೆಯ ವರ್ಷದಲ್ಲಿಯೂ ಅದೇ ಪ್ರಕಾರ ಅವನಿಗೆ ಕೊಟ್ಟರು.</verse>
				<verse number="6">ಹೀಗೆ ಯೋತಾಮನು ತನ್ನ ದೇವರಾದ ಯೆಹೋವ ದೇವರ ಮುಂದೆ ತನ್ನ ಮಾರ್ಗಗಳನ್ನು ಸರಿಪಡಿಸಿಕೊಂಡದ್ದರಿಂದ ಅವನು ಬಲಗೊಂಡನು.</verse>
				<verse number="7">ಯೋತಾಮನ ಇತರ ಕ್ರಿಯೆಗಳೂ, ಅವನು ಮಾಡಿದ ಯುದ್ಧಗಳೂ, ಅವನ ಮಾರ್ಗಗಳೂ, ಅವು ಇಸ್ರಾಯೇಲರ ಮತ್ತು ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="8">ಅವನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು.</verse>
				<verse number="9">ಯೋತಾಮನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಆಹಾಜನು ಅವನಿಗೆ ಬದಲಾಗಿ ಅರಸನಾದನು.</verse>
			</chapter>
			<chapter number="28">
				<verse number="1">ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಆದರೆ ಅವನು ತನ್ನ ತಂದೆಯಾದ ದಾವೀದನ ಹಾಗೆ ನಡೆಯದೆ, ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಲಿಲ್ಲ.</verse>
				<verse number="2">ಆಹಾಜನು ಇಸ್ರಾಯೇಲಿನ ಅರಸರ ಮಾರ್ಗದಲ್ಲಿ ನಡೆದು, ಆರಾಧಿಸುವುದಕ್ಕಾಗಿ ಬಾಳನ ಎರಕ ಹೊಯ್ದ ವಿಗ್ರಹಗಳನ್ನು ಮಾಡಿಸಿದನು.</verse>
				<verse number="3">ಇದಲ್ಲದೆ ಆಹಾಜನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಧೂಪವನ್ನರ್ಪಿಸಿ, ಯೆಹೋವ ದೇವರು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಇತರ ಜನಾಂಗಗಳ ಅಸಹ್ಯಕರವಾದ ಆಚಾರಗಳನ್ನು ಅನುಸರಿಸಿ ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಯಜ್ಞವಾಗಿ ಅರ್ಪಿಸಿದನು.</verse>
				<verse number="4">ಇದಲ್ಲದೆ ಅವನು ಪೂಜಾಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಎಲ್ಲಾ ಹಸಿರಾದ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.</verse>
				<verse number="5">ಆದ್ದರಿಂದ ಆಹಾಜನ ದೇವರಾದ ಯೆಹೋವ ದೇವರು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದರು. ಅರಾಮ್ಯರು ಅವನನ್ನು ಹೊಡೆದು, ಅವರಲ್ಲಿ ಅನೇಕರನ್ನು ಸೆರೆಹಿಡಿದು, ದಮಸ್ಕಕ್ಕೆ ತೆಗೆದುಕೊಂಡು ಹೋದರು. ಇದಲ್ಲದೆ ಆಹಾಜನು ಇಸ್ರಾಯೇಲಿನ ಅರಸನ ಕೈವಶವಾಗಿ, ಅವನಿಂದಲೂ ಕಠಿಣವಾಗಿ ಸೋತು ಹೋದನು.</verse>
				<verse number="6">ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ರೆಮಲ್ಯನ ಮಗ ಪೆಕಹನು ಒಂದೇ ದಿವಸದೊಳಗೆ ಅವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು.</verse>
				<verse number="7">ಇದಲ್ಲದೆ ಎಫ್ರಾಯೀಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ಮಾಸೇಯನನ್ನೂ, ಅರಮನೆಯ ನಾಯಕನಾದ ಅಜ್ರೀಕಾಮನನ್ನೂ, ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು.</verse>
				<verse number="8">ಇಸ್ರಾಯೇಲರು ತಮ್ಮ ಸಹೋದರರಲ್ಲಿ ಎರಡು ಲಕ್ಷಮಂದಿ ಸ್ತ್ರೀಯರನ್ನೂ, ಪುತ್ರಪುತ್ರಿಯರನ್ನೂ ಸೆರೆಯಾಗಿ ತೆಗೆದುಕೊಂಡು ಹೋದರು. ಅವರಿಂದ ಬಹು ಕೊಳ್ಳೆಯನ್ನೂ ತೆಗೆದುಕೊಂಡು ಸಮಾರ್ಯಕ್ಕೆ ಬಂದರು.</verse>
				<verse number="9">ಯೆಹೋವ ದೇವರ ಪ್ರವಾದಿ ಒಬ್ಬನು ಅಲ್ಲಿ ಇದ್ದನು. ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯಕ್ಕೆದುರಾಗಿ ಹೊರಟುಹೋಗಿ ಅವರಿಗೆ, “ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ಯೆಹೂದದ ಮೇಲೆ ಕೋಪಗೊಂಡದ್ದರಿಂದ, ದೇವರು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿದ್ದಾರೆ. ನೀವು ಆಕಾಶಕ್ಕೆ ಮುಟ್ಟುವ ಉಗ್ರತೆಯಿಂದ ಅವರನ್ನು ಕೊಂದುಹಾಕಿದ್ದೀರಿ.</verse>
				<verse number="10">ಈಗ ನಿಮಗೆ ದಾಸರೂ, ದಾಸಿಯರೂ ಆಗಿರುವ ಹಾಗೆ ಯೆಹೂದದ ಮತ್ತು ಯೆರೂಸಲೇಮಿನ ಮಕ್ಕಳನ್ನು ನಿಮ್ಮ ವಶಮಾಡಬೇಕೆಂದು ಇದ್ದೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಪರಾಧಗಳು ಇಲ್ಲವೋ?</verse>
				<verse number="11">ಆದ್ದರಿಂದ ನೀವು ನನ್ನ ಮಾತು ಕೇಳಿ ನಿಮ್ಮ ನಿಮ್ಮ ಸಹೋದರರಲ್ಲಿ ನೀವು ಸೆರೆಯಾಗಿ ತೆಗೆದುಕೊಂಡ ಸೆರೆಯವರನ್ನು ಬಿಟ್ಟುಬಿಡಿರಿ. ಏಕೆಂದರೆ ಯೆಹೋವ ದೇವರ ಕೋಪಾಗ್ನಿಯು ನಿಮ್ಮ ಮೇಲೆ ಇರುವುದು,” ಎಂದನು.</verse>
				<verse number="12">ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗ ಅಜರ್ಯನೂ, ಮೆಷಿಲ್ಲೇಮೋತನ ಮಗ ಬೆರೆಕ್ಯನೂ, ಶಲ್ಲೂಮನ ಮಗ ಹಿಜ್ಕೀಯನೂ, ಹದ್ಲೈಯನ ಮಗ ಅಮಾಸನೂ ಯುದ್ಧದಿಂದ ಬಂದವರಿಗೆ ವಿರೋಧವಾಗಿ ಎದ್ದು</verse>
				<verse number="13">ಅವರಿಗೆ, “ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ. ಏಕೆಂದರೆ ನಾವು ಯೆಹೋವ ದೇವರಿಗೆ ವಿರೋಧವಾಗಿ ಅಪರಾಧ ಮಾಡಿದ್ದೇವೆ. ನೀವು ನಮ್ಮ ಪಾಪಗಳನ್ನೂ, ನಮ್ಮ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾಧವು ದೊಡ್ಡದಾಗಿದೆ. ಇಸ್ರಾಯೇಲಿನ ಮೇಲೆ ಯೆಹೋವ ದೇವರ ಉಗ್ರಕೋಪವು ಉಂಟಾಯಿತು,” ಎಂದರು.</verse>
				<verse number="14">ಆಗ ಸೈನ್ಯದವರು ಸೆರೆಯವರನ್ನೂ, ಕೊಳ್ಳೆಯನ್ನೂ ಪ್ರಧಾನರ ಮುಂದೆಯೂ, ಸಮಸ್ತ ಕೂಟದ ಮುಂದೆಯೂ ಬಿಟ್ಟುಬಿಟ್ಟರು.</verse>
				<verse number="15">ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದವರು ಎದ್ದು ಸೆರೆಯವರನ್ನು ತೆಗೆದುಕೊಂಡು, ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ, ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕೊಟ್ಟು, ಅವರ ತಲೆಗಳಿಗೆ ಎಣ್ಣೆಯನ್ನು ಹಚ್ಚಿ, ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ, ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ತೆಗೆದುಕೊಂಡು ಬಂದರು. ಆಗ ಅವರು ಸಮಾರ್ಯಕ್ಕೆ ಹಿಂದಿರುಗಿದರು.</verse>
				<verse number="16">ಅದೇ ಕಾಲದಲ್ಲಿ ಅರಸನಾದ ಆಹಾಜನು ಅಸ್ಸೀರಿಯದ ಅರಸರ ಬಳಿಗೆ ಕಳುಹಿಸಿ ಸಹಾಯ ಬೇಡಿಕೊಂಡನು.</verse>
				<verse number="17">ಏಕೆಂದರೆ ಎದೋಮ್ಯರು ತಿರುಗಿಬಂದು ಯೆಹೂದದವರನ್ನು ಸಂಹರಿಸಿ, ಕೆಲವರನ್ನು ಸೆರೆಯಾಗಿ ತೆಗೆದುಕೊಂಡು ಹೋದರು.</verse>
				<verse number="18">ಇದಲ್ಲದೆ ಫಿಲಿಷ್ಟಿಯರು ತಗ್ಗಿನ ದೇಶದ ಪಟ್ಟಣಗಳಲ್ಲಿಯೂ, ಯೆಹೂದದ ದಕ್ಷಿಣ ಪ್ರಾಂತದಲ್ಲಿಯೂ ನುಗ್ಗಿ, ಬೇತ್ ಷೆಮೆಷ್, ಅಯ್ಯಾಲೋನ್, ಗೆದೇರೋತ್, ಸೋಕೋ ಅದರ ಗ್ರಾಮಗಳನ್ನೂ, ತಿಮ್ನಾ ಅದರ ಗ್ರಾಮಗಳನ್ನೂ, ಗಿಮ್ಜೋ ಅದರ ಗ್ರಾಮಗಳನ್ನೂ ತೆಗೆದುಕೊಂಡು ಅಲ್ಲಿ ವಾಸವಾಗಿದ್ದರು.</verse>
				<verse number="19">ಇಸ್ರಾಯೇಲಿನ ಅರಸನಾದ ಆಹಾಜನ ನಿಮಿತ್ತ ಯೆಹೋವ ದೇವರು ಯೆಹೂದ್ಯ ಪ್ರಾಂತ್ಯವನ್ನು ತಗ್ಗಿಸಿದರು. ಏಕೆಂದರೆ ಅವನು ಯೆಹೂದ್ಯರನ್ನು ಅಧರ್ಮಕ್ಕೆ ಪ್ರಚೋದಿಸಿ, ಯೆಹೋವ ದೇವರಿಗೆ ಮಹಾ ದ್ರೋಹ ಮಾಡಿದನು. ಯೆಹೋವ ದೇವರಿಗೆ ಅತ್ಯಂತ ಅಪನಂಬಿಗಸ್ತನಾಗಿದ್ದನು.</verse>
				<verse number="20">ಆಗ ಅಸ್ಸೀರಿಯದ ಅರಸ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು, ಅವನಿಗೆ ನೆರವಾಗುವುದಕ್ಕೆ ಬದಲಾಗಿ ಬಾಧೆಪಡಿಸಿದನು.</verse>
				<verse number="21">ಆಹಾಜನು ಯೆಹೋವ ದೇವರ ಆಲಯದಿಂದಲೂ, ಅರಮನೆಯಿಂದಲೂ, ಪ್ರಧಾನರಿಂದಲೂ ಆಸ್ತಿಯ ಒಂದು ಪಾಲನ್ನು ತೆಗೆದುಕೊಂಡು, ಅಸ್ಸೀರಿಯದ ಅರಸನಿಗೆ ಕಾಣಿಕೆಯಾಗಿ ಕೊಟ್ಟನು, ಆದರೂ ಅವನು ಆಹಾಜನಿಗೆ ಸಹಾಯ ಮಾಡಲಿಲ್ಲ.</verse>
				<verse number="22">ಇದಲ್ಲದೆ ಈ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಇನ್ನೂ ಅಧಿಕವಾಗಿ ಯೆಹೋವ ದೇವರಿಗೆ ಅಪನಂಬಿಗಸ್ತನಾದನು.</verse>
				<verse number="23">ಕೊನೆಗೆ ಆಹಾಜನು, “ಅರಾಮಿನ ಅರಸರ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ, ಅವು ನನಗೆ ಸಹ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ,” ಎಂದುಕೊಂಡು ತನ್ನನ್ನು ಸೋಲಿಸಿದ ದಮಸ್ಕದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಆ ದೇವರುಗಳು ಅವನನ್ನೂ, ಸಮಸ್ತ ಇಸ್ರಾಯೇಲರನ್ನೂ ಬೀಳುವಂತೆ ಮಾಡಿದವು.</verse>
				<verse number="24">ಇದಲ್ಲದೆ ಆಹಾಜನು ದೇವರ ಮನೆಯ ಸಲಕರಣೆಗಳನ್ನು ಕೂಡಿಸಿ, ದೇವರ ಆಲಯದ ಸಾಮಗ್ರಿಗಳನ್ನು ಚೂರುಚೂರು ಮಾಡಿ ಕತ್ತರಿಸಿ, ಯೆಹೋವ ದೇವರ ಮನೆಯ ಬಾಗಿಲುಗಳನ್ನು ಮುಚ್ಚಿಬಿಟ್ಟು, ಯೆರೂಸಲೇಮಿನ ಸಮಸ್ತ ಮೂಲೆಗಳಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.</verse>
				<verse number="25">ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪ ಸುಡುವುದಕ್ಕೆ ಎತ್ತರ ಸ್ಥಳಗಳನ್ನು ಕಟ್ಟಿಸಿ, ತನ್ನ ಪಿತೃಗಳ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದನು.</verse>
				<verse number="26">ಅವನ ಆಳ್ವಿಕೆಯಲ್ಲಿಯ ಇತರ ಕ್ರಿಯೆಗಳೂ, ಅವನ ಸಕಲ ಮಾರ್ಗಗಳೂ, ಮೊದಲನೆಯವುಗಳೂ, ಕಡೆಯವುಗಳೂ ಯೆಹೂದದ ಮತ್ತು ಇಸ್ರಾಯೇಲರ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="27">ಆಹಾಜನು ಮೃತನಾಗಿ ತನ್ನ ಪಿತೃಗಳ ಬಳಿಯಲ್ಲಿ ಸೇರಿದನು. ಆದರೆ ಅವನನ್ನು ಇಸ್ರಾಯೇಲಿನ ಅರಸರ ಸಮಾಧಿಯ ಸ್ಥಳದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು.</verse>
			</chapter>
			<chapter number="29">
				<verse number="1">ಹಿಜ್ಕೀಯನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಅಬೀಯಾ. ಅವಳು ಜೆಕರ್ಯನ ಮಗಳಾಗಿದ್ದಳು.</verse>
				<verse number="2">ಅವನು ತನ್ನ ತಂದೆ ದಾವೀದನು ಮಾಡಿದ ಪ್ರಕಾರ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.</verse>
				<verse number="3">ಹಿಜ್ಕೀಯನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವ ದೇವರ ಆಲಯದ ಬಾಗಿಲುಗಳನ್ನು ತೆರೆದು, ಅವುಗಳನ್ನು ಭದ್ರಪಡಿಸಿದನು.</verse>
				<verse number="4">ಇದಲ್ಲದೆ ಹಿಜ್ಕೀಯನು ಯಾಜಕರನ್ನೂ, ಲೇವಿಯರನ್ನೂ ಕರೆಕಳುಹಿಸಿ, ಅವರನ್ನು ಪೂರ್ವದಿಕ್ಕಿನ ಅಂಗಣದಲ್ಲಿ ಕೂಡಿಸಿಕೊಂಡು, ಅವರಿಗೆ ಹೇಳಿದ್ದೇನೆಂದರೆ,</verse>
				<verse number="5">“ಲೇವಿಯರೇ, ನನ್ನ ಮಾತನ್ನು ಕೇಳಿರಿ. ನೀವು ನಿಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆಮಾಡಿ, ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.</verse>
				<verse number="6">ಏಕೆಂದರೆ ನಮ್ಮ ಪಿತೃಗಳು ಅಪನಂಬಿಗಸ್ತರಾಗಿ, ನಮ್ಮ ದೇವರಾದ ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದನ್ನು ಮಾಡಿ, ಅವರನ್ನು ಬಿಟ್ಟುಬಿಟ್ಟರು. ಇದಲ್ಲದೆ ಅವರು ಯೆಹೋವ ದೇವರ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ, ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ.</verse>
				<verse number="7">ಇದಲ್ಲದೆ ಅವರು ದ್ವಾರಾಂಗಳದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ಆರಿಸಿ, ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ, ದಹನಬಲಿಗಳನ್ನು ಅರ್ಪಿಸದೆ ಹೋದರು.</verse>
				<verse number="8">ಆದ್ದರಿಂದ ಯೆಹೂದ ಮತ್ತು ಯೆರೂಸಲೇಮಿನವರ ಮೇಲೆ ಯೆಹೋವ ದೇವರು ಕೋಪಗೊಂಡು, ಅವುಗಳನ್ನು ಭಯಭೀತಿಗೂ, ಅಪಹಾಸ್ಯಗಳಿಗೂ ಆಸ್ಪದ ಮಾಡಿದ್ದಾರೆ. ಇದಕ್ಕೆ ನೀವೇ ಸಾಕ್ಷಿಗಳು.</verse>
				<verse number="9">ಇದಕ್ಕೋಸ್ಕರ ನಮ್ಮ ಪಿತೃಗಳು ಖಡ್ಗದಿಂದ ಬಿದ್ದಿದ್ದಾರೆ. ನಮ್ಮ ಪುತ್ರ ಪುತ್ರಿಯರೂ, ನಮ್ಮ ಹೆಂಡತಿಯರೂ ಸೆರೆಯಲ್ಲಿದ್ದಾರೆ.</verse>
				<verse number="10">ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಉಗ್ರಕೋಪವು ನಮ್ಮನ್ನು ಬಿಟ್ಟುಹೋಗುವ ಹಾಗೆ, ನಾನು ಅವರ ಸಂಗಡ ಒಡಂಬಡಿಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.</verse>
				<verse number="11">ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ. ಏಕೆಂದರೆ ತಮ್ಮ ಸಮ್ಮುಖದಲ್ಲಿ ನಿಲ್ಲುವುದಕ್ಕೂ, ತಮ್ಮನ್ನು ಸೇವಿಸುವುದಕ್ಕೂ, ತಮಗೆ ಸೇವಕರಾಗಿರುವುದಕ್ಕೂ, ತಮಗೆ ಧೂಪವನ್ನು ಸುಡುವುದಕ್ಕೂ ಯೆಹೋವ ದೇವರು ನಿಮ್ಮನ್ನು ಆಯ್ದುಕೊಂಡಿದ್ದಾರೆ,” ಎಂದನು.</verse>
				<verse number="12">ಆಗ ಲೇವಿಯರು ಸೇವೆಗಾಗಿ ಮುಂದೆ ಬಂದರು: ಕೊಹಾತ್ಯರಲ್ಲಿ ಅಮಾಸೈಯನ ಮಗ ಮಹತ್, ಅಜರ್ಯನ ಮಗ ಯೋಯೇಲ್, ಮೆರಾರೀಯರಲ್ಲಿ ಅಬ್ದೀಯನ ಮಗ ಕೀಷ್, ಯೆಹಲ್ಲೆಲೇಲನ ಮಗ ಅಜರ್ಯ, ಗೇರ್ಷೋನ್ಯರಲ್ಲಿ ಜಿಮ್ಮನ ಮಗ ಯೋವಾಹ, ಯೋವಾಹನ ಮಗ ಏದೆನ್,</verse>
				<verse number="13">ಎಲೀಚಾಫಾನ್ಯರಲ್ಲಿ ಶಿಮ್ರೀ, ಯೆಹೀಯೇಲ್, ಆಸಾಫ್ಯರಲ್ಲಿ ಜೆಕರ್ಯ, ಮತ್ತನ್ಯ,</verse>
				<verse number="14">ಹೇಮಾನ್ಯರಲ್ಲಿ ಯೆಹೀಯೇಲ್, ಶಿಮ್ಮಿ; ಯೆದುತೂನ್ಯರಲ್ಲಿ ಶೆಮಾಯ ಹಾಗೂ ಉಜ್ಜೀಯೇಲ್.</verse>
				<verse number="15">ಇವರು ಅರಸನ ಆಜ್ಞಾಧಾರಕರಾಗಿ ಯೆಹೋವ ದೇವರ ವಾಕ್ಯವನ್ನು ಅನುಸರಿಸಿ, ತಮ್ಮ ಸಹೋದರರನ್ನು ಕೂಡಿಸಿ, ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯವನ್ನು ಶುಚಿಮಾಡಲು ಬಂದರು.</verse>
				<verse number="16">ಯಾಜಕರು ಯೆಹೋವ ದೇವರ ಆಲಯವನ್ನು ಶುದ್ಧಿಮಾಡಲು ಅದರ ಒಳಭಾಗವನ್ನು ಪ್ರವೇಶಿಸಿ, ಯೆಹೋವ ದೇವರ ಮಂದಿರದಲ್ಲಿ ಕಂಡ ಮೈಲಿಗೆಯನ್ನು ಯೆಹೋವ ದೇವರ ಆಲಯದ ಅಂಗಳದೊಳಗೆ ತಂದರು. ಆಗ ಲೇವಿಯರು ಅದನ್ನು ತೆಗೆದುಕೊಂಡು, ಕಿದ್ರೋನ್ ಹಳ್ಳದಲ್ಲಿ ಹಾಕಲು ಹೊರಗೆ ಒಯ್ದರು.</verse>
				<verse number="17">ಅವರು ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಪ್ರತಿಷ್ಠೆ ಮಾಡಲು ಆರಂಭಿಸಿ, ಆ ತಿಂಗಳ ಎಂಟನೆಯ ದಿವಸದಲ್ಲಿ ಯೆಹೋವ ದೇವರ ದ್ವಾರಾಂಗಳದವರೆಗೂ ಬಂದರು. ಹೀಗೆಯೇ ಎಂಟು ದಿವಸಗಳಲ್ಲಿ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆಮಾಡಿ, ಅದನ್ನು ಮೊದಲನೆಯ ತಿಂಗಳಿನ ಹದಿನಾರನೆಯ ದಿವಸದಲ್ಲಿ ಮುಗಿಸಿದರು.</verse>
				<verse number="18">ಆಗ ಅವರು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರ ಆಲಯವನ್ನೆಲ್ಲಾ, ದಹನಬಲಿಪೀಠವನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನು, ಅದರ ಎಲ್ಲಾ ಪಾತ್ರೆಗಳನ್ನೂ ಶುದ್ಧಿಮಾಡಿದೆವು.</verse>
				<verse number="19">ಇದಲ್ಲದೆ ಅರಸನಾದ ಆಹಾಜನು ಆಳಿದಾಗ, ದೇವದ್ರೋಹಿಯಾಗಿ ಬಿಸಾಡಿದ ಎಲ್ಲಾ ಸಲಕರಣೆಗಳನ್ನು ಪುನಃ ತಂದು ಪ್ರತಿಷ್ಠೆ ಮಾಡಿದೆವು. ಅವು ಯೆಹೋವ ದೇವರ ಬಲಿಪೀಠದ ಮುಂದೆ ಇವೆ,” ಎಂದು ಹೇಳಿದರು.</verse>
				<verse number="20">ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು, ಪಟ್ಟಣದ ಪ್ರಧಾನರನ್ನು ಕೂಡಿಸಿ, ಯೆಹೋವ ದೇವರ ಆಲಯಕ್ಕೆ ಹೋದನು.</verse>
				<verse number="21">ಅವರು ರಾಜ್ಯಕ್ಕೋಸ್ಕರವೂ, ಪರಿಶುದ್ಧ ಸ್ಥಾನಕ್ಕೋಸ್ಕರವೂ, ಯೆಹೂದಕ್ಕೋಸ್ಕರವೂ ದೋಷಪರಿಹಾರದ ಬಲಿಯಾಗಿ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ, ಏಳು ಕುರಿಮರಿಗಳನ್ನೂ, ಏಳು ಮೇಕೆಗಳನ್ನೂ ತಂದರು. ಆಗ ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವ ದೇವರ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಹೇಳಿದನು.</verse>
				<verse number="22">ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು, ಪೀಠದ ಮೇಲೆ ಚಿಮುಕಿಸಿದರು. ಟಗರುಗಳನ್ನು ವಧಿಸಿ ರಕ್ತವನ್ನು ಚಿಮುಕಿಸಿದರು. ಕುರಿಮರಿಗಳನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಅವುಗಳನ್ನು ವಧಿಸಿ, ರಕ್ತವನ್ನು ತೆಗೆದುಕೊಂಡು, ಬಲಿಪೀಠದ ಮೇಲೆ ಚಿಮುಕಿಸಿದರು.</verse>
				<verse number="23">ಅರಸನ ಮುಂದೆಯೂ, ಸಭೆಯ ಮುಂದೆಯೂ ದೋಷಪರಿಹಾರದ ಬಲಿಗಾಗಿ ತಂದ ಹೋತಗಳನ್ನು ಹತ್ತಿರ ತೆಗೆದುಕೊಂಡು ಬಂದು, ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟರು.</verse>
				<verse number="24">ಆಗ ಸಮಸ್ತ ಇಸ್ರಾಯೇಲರಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ, ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ, ದೋಷಪರಿಹಾರದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗಬೇಕೆಂದು ಅರಸನು ಆಜ್ಞಾಪಿಸಿದನು.</verse>
				<verse number="25">ಇದಲ್ಲದೆ ಅವನು ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನೂ ಹಿಡಿದ ಲೇವಿಯರನ್ನು ದಾವೀದನೂ, ಅರಸನ ದರ್ಶಿಯಾದ ಗಾದನೂ, ಪ್ರವಾದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ, ಯೆಹೋವ ದೇವರ ಆಲಯದಲ್ಲಿ ನಿಲ್ಲಿಸಿದನು. ಏಕೆಂದರೆ ಯೆಹೋವ ದೇವರ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹೀಗೆ ಇತ್ತು.</verse>
				<verse number="26">ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿದ್ದರು.</verse>
				<verse number="27">ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ, ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗಳಿಂದಲೂ ಯೆಹೋವ ದೇವರ ಹಾಡು ಆರಂಭವಾಯಿತು.</verse>
				<verse number="28">ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ತನಕ ಹಾಡುಗಾರರು ಹಾಡಿದರು. ತುತೂರಿ ಊದುವವರು ಊದಿದರು.</verse>
				<verse number="29">ಅವರು ಅರ್ಪಿಸುವುದು ತೀರಿಸಿದಾಗ ಅರಸನೂ, ಅವನ ಸಂಗಡ ಇದ್ದವರೆಲ್ಲರೂ ಮೊಣಕಾಲೂರಿ ಆರಾಧಿಸಿದರು.</verse>
				<verse number="30">ಇದಲ್ಲದೆ ಅರಸನಾದ ಹಿಜ್ಕೀಯನೂ, ಪ್ರಧಾನರೂ ದಾವೀದನ ಮಾತುಗಳಿಂದಲೂ, ಆಸಾಫನ ಕೀರ್ತನೆಗಳಿಂದಲೂ ಯೆಹೋವ ದೇವರನ್ನು ಸ್ತುತಿಸಬೇಕೆಂದು ಲೇವಿಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಮೊಣಕಾಲೂರಿಕೊಂಡು ಆರಾಧಿಸಿದರು.</verse>
				<verse number="31">ಹಿಜ್ಕೀಯನು ಅವರಿಗೆ ಉತ್ತರಕೊಟ್ಟು, “ಈಗ ನೀವು ನಿಮ್ಮನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದ್ದರಿಂದ, ಸಮೀಪಕ್ಕೆ ಬಂದು ಬಲಿಗಳನ್ನೂ, ಸ್ತೋತ್ರ ಅರ್ಪಣೆಗಳನ್ನೂ ಯೆಹೋವ ದೇವರ ಆಲಯಕ್ಕೆ ತೆಗೆದುಕೊಂಡು ಬನ್ನಿರಿ,” ಎಂದನು. ಆಗ ಸಭೆಯವರು ಬಲಿಗಳನ್ನೂ, ಸ್ತೋತ್ರದ ಅರ್ಪಣೆಗಳನ್ನೂ ಮತ್ತು ಇಷ್ಟಪೂರ್ವಕ ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು.</verse>
				<verse number="32">ಸಭೆಯು ತಂದ ದಹನಬಲಿಗಳ ಲೆಕ್ಕವೇನೆಂದರೆ: ಎಪ್ಪತ್ತು ಹೋರಿಗಳು, ನೂರು ಟಗರುಗಳು, ಇನ್ನೂರು ಕುರಿಮರಿಗಳು. ಇವೆಲ್ಲಾ ಯೆಹೋವ ದೇವರಿಗೆ ಅರ್ಪಿಸಿದ ದಹನಬಲಿಗಳಾಗಿದ್ದವು.</verse>
				<verse number="33">ಪ್ರತಿಷ್ಠೆ ಮಾಡಲಾದವುಗಳು ಆರುನೂರು ಹೋರಿಗಳೂ ಮೂರು ಸಾವಿರ ಕುರಿಗಳೂ ಮೇಕೆಗಳೂ ಇದ್ದವು.</verse>
				<verse number="34">ಆದರೆ ಯಾಜಕರು ಸ್ವಲ್ಪ ಜನರಾಗಿದ್ದು, ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದುದರಿಂದ, ಕೆಲಸವು ತೀರುವವರೆಗೂ, ಮಿಕ್ಕ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವವರೆಗೂ ಲೇವಿಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಏಕೆಂದರೆ ಯಾಜಕರಿಗಿಂತ ತಮ್ಮನ್ನು ಪರಿಶುದ್ಧ ಮಾಡಿಕೊಳ್ಳುವುದರಲ್ಲಿ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.</verse>
				<verse number="35">ಇದಲ್ಲದೆ ದಹನಬಲಿಗಳೂ, ಸಮಾಧಾನದ ಬಲಿಗಳ ಕೊಬ್ಬೂ, ದಹನಬಲಿಗೆ ಬೇಕಾದ ಪಾನದ ಅರ್ಪಣೆಗಳೂ ಬಹಳವಾಗಿದ್ದವು. ಹೀಗೆ ಯೆಹೋವ ದೇವರ ಆಲಯದ ಸೇವೆಯು ಸಿದ್ಧವಾಯಿತು.</verse>
				<verse number="36">ಆಗ ದೇವರು ತಮ್ಮ ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ, ಜನರೆಲ್ಲರೂ ಸಂತೋಷಪಟ್ಟರು. ಏಕೆಂದರೆ ಈ ಕಾರ್ಯವು ತ್ವರೆಯಾಗಿ ನಡೆಯಿತು.</verse>
			</chapter>
			<chapter number="30">
				<verse number="1">ಆಗ ಅವರು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಪಸ್ಕವನ್ನು ಆಚರಿಸಲು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯಕ್ಕೆ ಬರುವಂತೆ ಹಿಜ್ಕೀಯನು ಸಮಸ್ತ ಇಸ್ರಾಯೇಲಿಗೂ ಯೆಹೂದಕ್ಕೂ ಹೇಳಿ ಕಳುಹಿಸಿ ಎಫ್ರಾಯೀಮ್ಯರಿಗೂ ಮನಸ್ಸೆಯವರಿಗೂ ಪತ್ರಗಳನ್ನು ಬರೆದನು.</verse>
				<verse number="2">ಯೆರೂಸಲೇಮಿನಲ್ಲಿರುವ ಅರಸನೂ ಅವನ ಪ್ರಧಾನರೂ ಸಮಸ್ತ ಸಭೆಯೂ ಎರಡನೆಯ ತಿಂಗಳಲ್ಲಿ ಪಸ್ಕವನ್ನು ಆಚರಿಸಲು ತೀರ್ಮಾನಿಸಿಕೊಂಡರು.</verse>
				<verse number="3">ಯಾಜಕರು ತಮ್ಮನ್ನು ತಕ್ಕ ಹಾಗೆ ಪ್ರತಿಷ್ಠೆ ಮಾಡಿಕೊಂಡಿರಲಿಲ್ಲ. ಜನರು ಯೆರೂಸಲೇಮಿನಲ್ಲಿ ಇನ್ನೂ ಕೂಡಿರಲಿಲ್ಲವಾದುದರಿಂದ ಆ ಕಾಲದಲ್ಲಿ ಪಸ್ಕಹಬ್ಬವನ್ನು ಆಚರಿಸಲಾರದೆ ಇದ್ದರು.</verse>
				<verse number="4">ಈ ಕಾರ್ಯವು ಅರಸನಿಗೂ ಸಮಸ್ತ ಜನರಿಗೂ ಸ್ಪಷ್ಟವಾಯಿತು.</verse>
				<verse number="5">ಆದ್ದರಿಂದ ಅವರು ಯೆರೂಸಲೇಮಿನಲ್ಲಿ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಲು ಬರಬೇಕೆಂದು ಬೇರ್ಷೆಬ ಮೊದಲುಗೊಂಡು ದಾನಿನವರೆಗೂ ಸಮಸ್ತ ಇಸ್ರಾಯೇಲಿನಲ್ಲಿ ಕೂಗಿ ಸಾರಲು ನಿರ್ಣಯಿಸಿದರು. ಯೆಹೋವ ದೇವರ ನಿಯಮದ ಪ್ರಕಾರ ಅವರು ಬಹುಕಾಲದಿಂದ ಪಸ್ಕವನ್ನು ಆಚರಿಸಿರಲಿಲ್ಲ.</verse>
				<verse number="6">ಅದೇ ಪ್ರಕಾರ ಓಟಗಾರರು ಅರಸನ ಕೈಯಿಂದಲೂ ಅವನ ಪ್ರಧಾನರ ಕೈಯಿಂದಲೂ ಪತ್ರಗಳನ್ನು ತೆಗೆದುಕೊಂಡು, ಅರಸನ ಅಪ್ಪಣೆಯ ಪ್ರಕಾರ ಸಮಸ್ತ ಇಸ್ರಾಯೇಲ್ ಮತ್ತು ಯೆಹೂದ ದೇಶಗಳಿಗೆ ಹೋಗಿ, “ಇಸ್ರಾಯೇಲರೇ, ಅಬ್ರಹಾಮನ, ಇಸಾಕನ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿರಿ. ಆಗ ಅವರು ಅಸ್ಸೀರಿಯದ ಅರಸರ ಕೈಗೆ ತಪ್ಪಿಸಿಕೊಂಡ ನಿಮ್ಮ ಉಳಿದವರ ಕಡೆಗೆ ತಿರುಗುವರು.</verse>
				<verse number="7">ನಿಮ್ಮ ತಂದೆಗಳೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.</verse>
				<verse number="8">ಆದ್ದರಿಂದ ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಕಠಿಣಪಡಿಸಿಕೊಳ್ಳಬೇಡಿರಿ. ಯೆಹೋವ ದೇವರಿಗೆ ಅಧೀನರಾಗಿ ಅವರು ಯುಗಯುಗಕ್ಕೂ ಪ್ರತಿಷ್ಠೆ ಮಾಡಿದ ಪರಿಶುದ್ಧ ಸ್ಥಾನದಲ್ಲಿ ಪ್ರವೇಶಿಸಿದ ನಿಮ್ಮ ದೇವರಾದ ಯೆಹೋವ ದೇವರನ್ನು ಸೇವಿಸಿರಿ. ಆಗ ದೇವರು ತಮ್ಮ ಕೋಪವನ್ನು ಬಿಟ್ಟು ನಿಮ್ಮ ಕಡೆಗೆ ತಿರುಗುವರು.</verse>
				<verse number="9">ನೀವು ಯೆಹೋವ ದೇವರ ಕಡೆಗೆ ತಿರುಗಿ ಈ ದೇಶಕ್ಕೆ ಬರುವಂತೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಅನುಕಂಪವನ್ನು ಹೊಂದುವರು. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಕೃಪೆಯೂ ಅನುಕಂಪವೂ ಉಳ್ಳವರಾಗಿದ್ದಾರೆ. ನೀವು ಅವರ ಕಡೆಗೆ ತಿರುಗಿದರೆ, ಅವರು ನಿಮ್ಮ ಕಡೆಯಿಂದ ತಮ್ಮ ಮುಖವನ್ನು ತಿರುಗಿಸುವುದಿಲ್ಲ,” ಎಂದು ಹೇಳಿದರು.</verse>
				<verse number="10">ಹೀಗೆಯೇ ಓಟಗಾರರು ಎಫ್ರಾಯೀಮನ, ಮನಸ್ಸೆಯ ದೇಶದಲ್ಲಿ ಜೆಬುಲೂನ್ ಪರ್ಯಂತರ ಸಂಚರಿಸಿ, ಪಟ್ಟಣ ಪಟ್ಟಣವನ್ನು ಹಾದುಹೋದರು. ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು.</verse>
				<verse number="11">ಆದರೂ ಆಶೇರ್, ಮನಸ್ಸೆ, ಜೆಬುಲೂನ್, ಇವರಲ್ಲಿ ಕೆಲವರು ತಮ್ಮನ್ನು ತಗ್ಗಿಸಿಕೊಂಡು ಯೆರೂಸಲೇಮಿಗೆ ಬಂದರು.</verse>
				<verse number="12">ಇದಲ್ಲದೆ ಯೆಹೋವ ದೇವರ ವಾಕ್ಯದಿಂದ ಉಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಗೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂದದವರ ಮೇಲೆ ಇತ್ತು.</verse>
				<verse number="13">ಎರಡನೆಯ ತಿಂಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕೆ ಯೆರೂಸಲೇಮಿನಲ್ಲಿ ಬಹಳ ಜನರು ಕೂಡಿಕೊಂಡು ಮಹಾ ದೊಡ್ಡ ಸಮೂಹವಾಯಿತು.</verse>
				<verse number="14">ಆಗ ಅವರು ಎದ್ದು ಯೆರೂಸಲೇಮಿನಲ್ಲಿದ್ದ ಬಲಿಪೀಠಗಳನ್ನು ಮತ್ತು ಧೂಪಪೀಠಗಳನ್ನು ತೆಗೆದುಹಾಕಿದರು. ಆ ಧೂಪಪೀಠಗಳನ್ನೆಲ್ಲಾ ತೆಗೆದುಕೊಂಡುಹೋಗಿ ಕಿದ್ರೋನ್ ಹಳ್ಳದಲ್ಲಿ ಹಾಕಿದರು.</verse>
				<verse number="15">ಎರಡನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು. ಯಾಜಕರೂ, ಲೇವಿಯರೂ ನಾಚಿಕೆಪಟ್ಟು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯದೊಳಗೆ ದಹನಬಲಿಗಳನ್ನು ತಂದರು.</verse>
				<verse number="16">ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆಯ ನಿಯಮದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು, ಯಾಜಕರು, ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು.</verse>
				<verse number="17">ಜನರಲ್ಲಿ ಅನೇಕರು ಅಪರಿಶುದ್ಧರಾಗಿದ್ದರು. ಆದ್ದರಿಂದ ಲೇವಿಯರು ಅಶುದ್ಧರಾದ ಎಲ್ಲರ ನಿಮಿತ್ತ ಅವರನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವ ಹಾಗೆ ಪಸ್ಕದ ಬಲಿಗಳನ್ನು ವಧಿಸುವುದಕ್ಕೆ ಇದ್ದರು.</verse>
				<verse number="18">ಎಫ್ರಾಯೀಮ್, ಮನಸ್ಸೆ, ಇಸ್ಸಾಕಾರ್, ಜೆಬುಲೂನ್ ಇವರಲ್ಲಿ ಅನೇಕರು ತಮ್ಮನ್ನು ಶುದ್ಧಮಾಡಿಕೊಳ್ಳದೆ ಮೋಶೆಯ ನಿಯಮಕ್ಕೆ ವಿರುದ್ಧ ರೀತಿಯಿಂದ ಪಸ್ಕದ ಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು ಅವರಿಗೋಸ್ಕರ ಪ್ರಾರ್ಥಿಸಿ, “ಯಾವನಾದರೂ ಪರಿಶುದ್ಧ ಸ್ಥಾನದ ಶುದ್ಧಿಯ ಪ್ರಕಾರ ಶುಚಿಯಾಗದೆ ಇದ್ದರೂ,</verse>
				<verse number="19">ಯೆಹೋವ ದೇವರೇ, ತಮ್ಮ ಪಿತೃಗಳ ದೇವರಾದ ನಿಮ್ಮನ್ನು ಹುಡುಕಬೇಕೆಂದು ಮನಸ್ಸು ಮಾಡುವವರಿಗೆಲ್ಲ ಕ್ಷಮೆಯನ್ನು ಅನುಗ್ರಹಿಸಿರಿ,” ಎಂದು ವಿಜ್ಞಾಪನೆ ಮಾಡಿದನು.</verse>
				<verse number="20">ಯೆಹೋವ ದೇವರು ಹಿಜ್ಕೀಯನ ಮಾತನ್ನು ಕೇಳಿ, ಜನರನ್ನು ಸ್ವಸ್ಥಮಾಡಿದರು.</verse>
				<verse number="21">ಆದ್ದರಿಂದ ಯೆರೂಸಲೇಮಿನಲ್ಲಿದ್ದ ಇಸ್ರಾಯೇಲರು ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಏಳು ದಿವಸ ಸಂತೋಷದಿಂದ ಆಚರಿಸಿದರು. ಲೇವಿಯರೂ ಯಾಜಕರೂ ಯೆಹೋವ ದೇವರಿಗೆ ಸಮರ್ಪಿತವಾದ ಮಹಾ ಶಬ್ದದ ವಾದ್ಯಗಳಿಂದ ಯೆಹೋವ ದೇವರಿಗೆ ಹಾಡಿ ಪ್ರತಿದಿನವೂ ಯೆಹೋವ ದೇವರನ್ನು ಸ್ತುತಿಸಿದರು.</verse>
				<verse number="22">ಹಿಜ್ಕೀಯನು ಯೆಹೋವ ದೇವರ ಕಾರ್ಯಗಳಲ್ಲಿ ಒಳ್ಳೆಯ ತಿಳುವಳಿಕೆಯನ್ನು ಹೊಂದಿದ್ದ ಸಮಸ್ತ ಲೇವಿಯರೊಡನೆ ಉತ್ತೇಜನದ ಮಾತುಗಳಿಂದ ಮಾತನಾಡಿದನು. ಅವರು ಹಬ್ಬವನ್ನು ಏಳು ದಿನಗಳವರೆಗೂ ಸಮಾಧಾನದ ಬಲಿಗಳನ್ನು ಅರ್ಪಿಸುತ್ತಾ, ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಸ್ತುತಿಸುತ್ತಾ, ಔತಣಮಾಡಿ ಆಚರಿಸಿದರು.</verse>
				<verse number="23">ಅಲ್ಲದೆ ಕೂಟವೆಲ್ಲಾ ಇನ್ನೂ ಏಳು ದಿವಸಗಳ ಕಾಲ ಹಬ್ಬವನ್ನು ಆಚರಿಸಬೇಕೆಂದು ತಿರ್ಮಾನಿಸಿ ಇನ್ನೂ ಏಳು ದಿನಗಳ ಕಾಲ ಬಹಳ ಸಂತೋಷದಿಂದ ಹಬ್ಬವನ್ನು ಆಚರಿಸಿದರು.</verse>
				<verse number="24">ಯೆಹೂದದ ಅರಸನಾದ ಹಿಜ್ಕೀಯನು ಸಭೆಗೆ 1,000 ಹೋರಿಗಳನ್ನೂ 7,000 ಕುರಿಗಳನ್ನೂ ಕೊಟ್ಟನು. ಇದಲ್ಲದೆ ಪ್ರಧಾನರು ಕೂಟಕ್ಕೆ 1,000 ಹೋರಿಗಳನ್ನೂ 10,000 ಕುರಿಗಳನ್ನೂ ಕೊಟ್ಟರು. ಯಾಜಕರಲ್ಲಿ ಅನೇಕರು ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡರು.</verse>
				<verse number="25">ಯೆಹೂದದ ಸಮೂಹದವರೆಲ್ಲರೂ ಯಾಜಕರೂ, ಲೇವಿಯರೂ, ಇಸ್ರಾಯೇಲಿನಿಂದ ಬಂದ ಸಮಸ್ತ ಜನರೂ, ಇಸ್ರಾಯೇಲಿನ ದೇಶದಿಂದ ಬಂದ ಪರದೇಶಿಗಳೂ, ಯೆಹೂದದಲ್ಲಿ ವಾಸವಾಗಿರುವವರೂ ಸಂತೋಷಪಟ್ಟರು.</verse>
				<verse number="26">ಹೀಗೆಯೇ ಯೆರೂಸಲೇಮಿನಲ್ಲಿ ಮಹಾ ಸಂತೋಷ ಉಂಟಾಗಿತ್ತು. ಇಸ್ರಾಯೇಲಿನ ಅರಸನಾದ ದಾವೀದನ ಮಗ ಸೊಲೊಮೋನನ ಕಾಲದಿಂದ ಯೆರೂಸಲೇಮಿನಲ್ಲಿ ಅಂಥಾ ಆಚರಣೆಯು ನಡೆದಿರಲಿಲ್ಲ.</verse>
				<verse number="27">ಆಗ ಯಾಜಕರೂ ಲೇವಿಯರೂ ಎದ್ದು ಜನರನ್ನು ಆಶೀರ್ವದಿಸಿದರು. ದೇವರು ಅವರ ಪ್ರಾರ್ಥನೆಯನ್ನು ಕೇಳಿದರು. ಅವರ ಪ್ರಾರ್ಥನೆಯು ದೇವರ ಪರಿಶುದ್ಧ ನಿವಾಸ ಸ್ಥಾನವಾದ ಪರಲೋಕಕ್ಕೆ ತಲುಪಿತು.</verse>
			</chapter>
			<chapter number="31">
				<verse number="1">ಇದಾದನಂತರ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲರು ಯೆಹೂದ ಪಟ್ಟಣಗಳಿಗೆ ಹೊರಟುಹೋಗಿ, ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದು, ಸಮಸ್ತ ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್, ಮನಸ್ಸೆ ದೇಶಗಳಲ್ಲಿ ಯಾವುದನ್ನೂ ಉಳಿಸಲಿಲ್ಲ, ಉನ್ನತ ಪೂಜಾಸ್ಥಳಗಳನ್ನು ಮತ್ತು ಬಲಿಪೀಠಗಳನ್ನು ಕೆಡವಿಹಾಕಿದರು. ಆಗ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಆಸ್ತಿಪಾಸ್ತಿಯಿರುವ ಪಟ್ಟಣಗಳಿಗೆ ತಿರುಗಿ ಹೋದರು.</verse>
				<verse number="2">ಹಿಜ್ಕೀಯನು ಅವನವನ ಸೇವೆಯ ಪ್ರಕಾರ ಯಾಜಕರ, ಲೇವಿಯರ ಸರತಿಗಳನ್ನು ನೇಮಿಸಿದನು. ದಹನಬಲಿಗಳನ್ನೂ ಮತ್ತು ಸಮಾಧಾನದ ಬಲಿಗಳನ್ನೂ ಅರ್ಪಿಸುವುದಕ್ಕೂ, ಸೇವಿಸುವುದಕ್ಕೂ ಯೆಹೋವ ದೇವರ ಪಾಳೆಯದ ಬಾಗಿಲುಗಳಲ್ಲಿ ಸ್ತೋತ್ರ ಮಾಡುವುದಕ್ಕೂ, ಕೊಂಡಾಡುವುದಕ್ಕೂ ಯಾಜಕರನ್ನೂ, ಲೇವಿಯರನ್ನೂ ನೇಮಿಸಿದನು.</verse>
				<verse number="3">ಅವನು ಯೆಹೋವ ದೇವರ ನಿಯಮದಲ್ಲಿ ಬರೆದ ಪ್ರಕಾರ ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ವಿಶ್ರಾಂತಿಯ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ನೇಮಿಸಿದ ಹಬ್ಬಗಳಲ್ಲಿಯೂ ಬೇಕಾದ ದಹನಬಲಿಗಳಿಗೋಸ್ಕರವೂ ಅರಸನ ಆಸ್ತಿಯಿಂದಲೇ ಅವನ ಭಾಗವನ್ನು ನೇಮಿಸಿದನು.</verse>
				<verse number="4">ಯಾಜಕರೂ ಲೇವಿಯರೂ ಯೆಹೋವ ದೇವರ ನಿಯಮದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ತಕ್ಕ ಭಾಗವನ್ನು ಕೊಡಬೇಕೆಂದು ಯೆರೂಸಲೇಮಿನಲ್ಲಿ ಜನರಿಗೆ ಅವನು ಆಜ್ಞಾಪಿಸಿದನು.</verse>
				<verse number="5">ಈ ಆಜ್ಞೆ ಹೊರಗೆ ಬಂದಾಗಲೇ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು, ಹೊಲಗಳ ಹುಟ್ಟುವಳಿ, ಇವುಗಳ ಮೊದಲನೆಯ ಪಾಲನ್ನು ಬಹಳವಾಗಿ ಒಳಗೆ ತಂದರು. ಹಾಗೆಯೇ ಸಮಸ್ತ ವಸ್ತುಗಳಲ್ಲಿ ದಶಮಾಂಶದ ಪಾಲನ್ನು ಬಹಳವಾಗಿ ತಂದರು.</verse>
				<verse number="6">ಇದಲ್ಲದೆ ಯೆಹೂದ ಪಟ್ಟಣಗಳಲ್ಲಿ ನಿವಾಸವಾಗಿರುವ ಇಸ್ರಾಯೇಲರು ಯೆಹೂದ್ಯರು ದನಗಳಲ್ಲಿಯೂ ಕುರಿಗಳಲ್ಲಿಯೂ ದಶಮಾಂಶ ತಂದರು. ತಮ್ಮ ದೇವರಾದ ಯೆಹೋವ ದೇವರಿಗೆ ಪರಿಶುದ್ಧ ಮಾಡಿದ ಪರಿಶುದ್ಧ ವಸ್ತುಗಳಲ್ಲಿ ದಶಮಾಂಶದ ಪಾಲು ತಂದು, ರಾಶಿರಾಶಿಯಾಗಿ ಇಟ್ಟರು.</verse>
				<verse number="7">ಮೂರನೆಯ ತಿಂಗಳಲ್ಲಿ ರಾಶಿ ಮಾಡುವುದನ್ನು ಆರಂಭಿಸಿ, ಏಳನೆಯ ತಿಂಗಳಲ್ಲಿ ತೀರಿಸಿದರು.</verse>
				<verse number="8">ಹಿಜ್ಕೀಯನೂ ಪ್ರಧಾನರೂ ಬಂದು ರಾಶಿಗಳನ್ನು ನೋಡಿದಾಗ, ಅವರು ಯೆಹೋವ ದೇವರನ್ನೂ ಸ್ತುತಿಸಿದರು, ಅವರ ಜನರಾದ ಇಸ್ರಾಯೇಲರನ್ನೂ ಆಶೀರ್ವದಿಸಿದರು.</verse>
				<verse number="9">ಆಗ ಹಿಜ್ಕೀಯನು ರಾಶಿಗಳನ್ನು ಕುರಿತು ಯಾಜಕರನ್ನೂ, ಲೇವಿಯರನ್ನೂ ವಿಚಾರಿಸಿದನು.</verse>
				<verse number="10">ಚಾದೋಕ್ ಸಂತಾನದ ಮುಖ್ಯಯಾಜಕ ಅಜರ್ಯನು, “ಜನರು ದೇವರಾದ ಯೆಹೋವ ದೇವರಿಗೆ ಕಾಣಿಕೆಯಾಗಿ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಯೆಹೋವ ದೇವರು ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು.</verse>
				<verse number="11">ಬಳಿಕ ಹಿಜ್ಕೀಯನು ಯೆಹೋವ ದೇವರ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲು ಆಜ್ಞಾಪಿಸಿದನು.</verse>
				<verse number="12">ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನು ತಮ್ಮ ಆದಾಯದ ದಶಮಾಂಶವನ್ನು ಹಾಗು ದೇವರಿಗೆ ಮುಡುಪಾಗಿ ಇಟ್ಟಿದ್ದನ್ನು ನಿರ್ವಂಚನೆಯಿಂದ ತಂದು, ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಯಲ್ಲಿ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು. ಅವನ ತಮ್ಮ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು.</verse>
				<verse number="13">ಅರಸನಾದ ಹಿಜ್ಕೀಯನು ನೇಮಿಸಿದ ಪ್ರಕಾರ, ಯೆಹೀಯೇಲ್, ಅಜಜ್ಯ, ನಹತ್, ಅಸಾಯೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ, ಇವರು ಕೋನನ್ಯನ ಸಹೋದರನಾದ ಶಿಮ್ಮಿಯ ಕೈಕೆಳಗೆ ಆಡಳಿತಗಾರರಾಗಿದ್ದರು. ಅಜರ್ಯನು ದೇವರ ಆಲಯದ ಅಧಿಪತಿಯಾಗಿದ್ದನು.</verse>
				<verse number="14">ಲೇವಿಯನಾಗಿರುವ ಇಮ್ನನ ಮಗ ಕೋರೆಯು ಎಂಬ ಪೂರ್ವದಿಕ್ಕಿನಲ್ಲಿರುವ ದ್ವಾರಪಾಲಕನು ಯೆಹೋವ ದೇವರ ಕಾಣಿಕೆಗಳನ್ನೂ, ಮಹಾಪರಿಶುದ್ಧವಾದವುಗಳನ್ನೂ ಪಾಲು ಹಂಚುವುದಕ್ಕೆ ದೇವರಿಗೆ ಉಚಿತಾರ್ಥವಾಗಿ ಅರ್ಪಿಸಿದ ಕಾಣಿಕೆಗಳ ಮೇಲ್ವಿಚಾರಕನಾಗಿದ್ದನು.</verse>
				<verse number="15">ಇವನ ತರುವಾಯ ಯಾಜಕರ ಪಟ್ಟಣಗಳಲ್ಲಿ ತಮ್ಮ ಸಹೋದರರಿಗೆ ನಂಬಿಗಸ್ತಿಕೆಯಿಂದ ಸರತಿ ಸರತಿಯಾಗಿ ಹಿರಿಯರು ಕಿರಿಯರು ಎಂಬ ವ್ಯತ್ಯಾಸಮಾಡದೆ ಪಾಲು ಹಂಚುವುದಕ್ಕೆ ಏದೆನನೂ, ಮಿನ್ಯಾಮೀನನೂ, ಯೇಷೂವನ ಶೆಮಾಯನೂ, ಅಮರ್ಯನೂ, ಶೆಕನ್ಯನೂ ಇದ್ದರು.</verse>
				<verse number="16">ವಂಶಾವಳಿಯ ದಾಖಲೆಯ ಪ್ರಕಾರ ಮೂರು ವರ್ಷ ಪ್ರಾಯ ಮೊದಲ್ಗೊಂಡು ಮೇಲಿರುವ ಗಂಡು ಮಕ್ಕಳು ಹೊರತಾಗಿ ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸುವವರೆಲ್ಲರಿಗೆ ಅವರ ಕೆಲಸಗಳಲ್ಲಿ ಅವರ ಸರತಿಗಳ ಪ್ರಕಾರ ಅವರ ಸೇವೆಗೆ ಅವರವರ ದಿನದ ಭಾಗವನ್ನು ಕೊಡುವುದಕ್ಕೂ,</verse>
				<verse number="17">ಹಾಗೆಯೇ ಇಪ್ಪತ್ತು ವರ್ಷ ಪ್ರಾಯ ಮೊದಲ್ಗೊಂಡು ವಂಶಾವಳಿಯ ದಾಖಲೆಯ ಪ್ರಕಾರ ಅವರವರ ಕೆಲಸಗಳಲ್ಲಿಯೂ, ಅವರವರ ಸರತಿಗಳಲ್ಲಿಯೂ ಇರುವ ಯಾಜಕರಿಗೂ, ಲೇವಿಯರಿಗೂ ಅವರ ಸಮಸ್ತ ಕೂಟದಲ್ಲಿ ವಂಶಾವಳಿಯ ದಾಖಲೆಯ ಪ್ರಕಾರ</verse>
				<verse number="18">ಅವರ ಹೆಂಡತಿಯರಿಗೂ ಚಿಕ್ಕವರಿಗೂ ಪುತ್ರಪುತ್ರಿಯರಿಗೂ ಪಾಲು ಕೊಡುವುದಕ್ಕೂ ಇದ್ದರು. ಏಕೆಂದರೆ ಅವರು ತಮ್ಮ ಉದ್ಯೋಗದಲ್ಲಿ ತಮ್ಮನ್ನೇ ತಾವು ಪರಿಶುದ್ಧಗೊಳಿಸುವಲ್ಲಿ ನಂಬಿಗಸ್ತರಾಗಿದ್ದರು.</verse>
				<verse number="19">ಯಾಜಕರಲ್ಲಿ ಸಮಸ್ತ ಗಂಡಸರಿಗೂ, ಲೇವಿಯರಲ್ಲಿ ಲಿಖಿತರಾದ ಸಮಸ್ತರಿಗೂ ಪಾಲನ್ನು ಕೊಡುವುದಕ್ಕೆ ತಮ್ಮ ಪಟ್ಟಣಗಳ ವಲಯಗಳಲ್ಲಿರುವ ಯಾಜಕರಾದ ಆರೋನನ ವಂಶಾವಳಿಯ ದಾಖಲೆಯ ಪ್ರಕಾರ ಮನುಷ್ಯರು ಪ್ರತಿ ಪಟ್ಟಣದಲ್ಲಿ ಇದ್ದರು.</verse>
				<verse number="20">ಹೀಗೆಯೇ ಹಿಜ್ಕೀಯನು ಸಮಸ್ತ ಯೆಹೂದದಲ್ಲಿ ತನ್ನ ದೇವರಾದ ಯೆಹೋವ ದೇವರ ಸಮ್ಮುಖದಲ್ಲಿ ಉತ್ತಮವಾದದ್ದನ್ನೂ, ಸರಿಯಾದದ್ದನ್ನೂ, ಸತ್ಯವಾದದ್ದನ್ನೂ ನಡೆಸಿದನು.</verse>
				<verse number="21">ಇದಲ್ಲದೆ ದೇವರ ಆಲಯದ ಸೇವೆಯಲ್ಲಿಯೂ, ಮೋಶೆಯ ನಿಯಮದಲ್ಲಿಯೂ, ದೇವರ ಆಜ್ಞೆಗಳಲ್ಲಿಯೂ ಅವನು ತನ್ನ ದೇವರನ್ನು ಹುಡುಕಲು ಆರಂಭಿಸಿದ ಸಮಸ್ತ ಕಾರ್ಯಗಳನ್ನು ತನ್ನ ಪೂರ್ಣಹೃದಯದಿಂದ ಮಾಡಿ, ಅವನು ಅಭಿವೃದ್ಧಿ ಹೊಂದಿದನು.</verse>
			</chapter>
			<chapter number="32">
				<verse number="1">ಹಿಜ್ಕೀಯನು ಇಷ್ಟು ನಂಬಿಗಸ್ತಿಕೆಯಿಂದ ಎಲ್ಲವನ್ನೂ ಮಾಡಿದ ತರುವಾಯ, ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದಲ್ಲಿ ಪ್ರವೇಶಿಸಿ ಕೋಟೆಯುಳ್ಳ ಪಟ್ಟಣಗಳ ಬಳಿಯಲ್ಲಿ ದಂಡಿಳಿಸಿ, ಅವುಗಳನ್ನು ತನಗಾಗಿ ಜಯಿಸಬೇಕೆಂದು ಮುತ್ತಿಗೆಹಾಕಿದನು.</verse>
				<verse number="2">ಸನ್ಹೇರೀಬನು ಬಂದದ್ದನ್ನೂ, ಅವನು ಯೆರೂಸಲೇಮಿನ ಮೇಲೆ ಯುದ್ಧಮಾಡಲು ನಿಶ್ಚಯಿಸಿದ್ದನ್ನೂ ಹಿಜ್ಕೀಯನು ಕಂಡಾಗ,</verse>
				<verse number="3">ಅವನು ಪಟ್ಟಣದ ಹೊರಗಿರುವ ನೀರಿನ ಬುಗ್ಗೆಗಳನ್ನು ಮುಚ್ಚಿಸುವುದಕ್ಕೆ ತನ್ನ ಪ್ರಧಾನರ ಮತ್ತು ತನ್ನ ಪರಾಕ್ರಮಶಾಲಿಗಳ ಸಂಗಡ ಯೋಚಿಸಿಕೊಂಡನು. ಅವರು ಅವನಿಗೆ ಸಹಾಯ ಕೊಟ್ಟರು.</verse>
				<verse number="4">ಆದ್ದರಿಂದ ಅನೇಕ ಜನರು ಕೂಡಿಕೊಂಡು, “ನೀರು ಬುಗ್ಗೆಗಳನ್ನೂ, ದೇಶದ ಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟು, ಅಸ್ಸೀರಿಯದ ಅರಸರು ಬಂದು ಬಹಳ ನೀರು ದೊರಕಿಸಿಕೊಳ್ಳುವುದು ಏಕೆ?” ಎಂದರು.</verse>
				<verse number="5">ಇದಲ್ಲದೆ ಅವನು ತನ್ನನ್ನು ಬಲಪಡಿಸಿಕೊಂಡು, ಬಿದ್ದುಹೋಗಿದ್ದ ಗೋಡೆಯನ್ನೆಲ್ಲಾ ಕಟ್ಟಿಸಿ, ಗೋಪುರಗಳ ಪರ್ಯಂತರ ಅದನ್ನು ಎತ್ತರಮಾಡಿ, ಅದರ ಹೊರಭಾಗದಲ್ಲಿ ಮತ್ತೊಂದು ಗೋಡೆಯನ್ನು ಕಟ್ಟಿಸಿ, ದಾವೀದನ ಪಟ್ಟಣದಲ್ಲಿರುವ ಮಿಲ್ಲೋವನ್ನು ದುರಸ್ತಿ ಮಾಡಿ ಈಟಿಗಳನ್ನೂ, ಗುರಾಣಿಗಳನ್ನೂ ಬಹಳವಾಗಿ ಮಾಡಿಸಿದನು.</verse>
				<verse number="6">ಜನರ ಮೇಲೆ ಯುದ್ಧದ ಸೈನ್ಯಗಳ ಅಧಿಪತಿಗಳನ್ನು ಇರಿಸಿ, ಪಟ್ಟಣದ ಬಾಗಿಲ ಬೀದಿಯಲ್ಲಿ ತನ್ನ ಬಳಿಗೆ ಅವರನ್ನು ಕೂಡಿಸಿಕೊಂಡು, ಈ ಮಾತುಗಳಿಂದ ಅವರನ್ನು ಪ್ರೋತ್ಸಾಹಿಸಿದರು:</verse>
				<verse number="7">“ಬಲಗೊಳ್ಳಿರಿ, ಧೈರ್ಯವಾಗಿರಿ, ಅಸ್ಸೀರಿಯದ ಅರಸನ ನಿಮಿತ್ತವೂ, ಅವನ ಸಂಗಡ ಕೂಡಿರುವ ಮಹಾ ಗುಂಪಿನ ನಿಮಿತ್ತವೂ ಭಯಪಡಬೇಡಿರಿ, ನಿರಾಶರಾಗಬೇಡಿರಿ. ಏಕೆಂದರೆ ಅವನ ಸಂಗಡ ಇರುವವರಿಗಿಂತ ಮಿಗಿಲಾದದ್ದು ನಮ್ಮ ಸಂಗಡ ಇದೆ.</verse>
				<verse number="8">ನಮಗಾದರೋ ಸಹಾಯ ಮಾಡುವುದಕ್ಕೂ, ನಮ್ಮ ಯುದ್ಧಗಳನ್ನು ನಡಿಸುವುದಕ್ಕೂ ನಮ್ಮ ದೇವರಾದ ಯೆಹೋವ ದೇವರು ತಾವೇ ಇದ್ದಾರೆ,” ಎಂದು ಹೇಳಿದನು. ಆದ್ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಭರವಸೆಯುಳ್ಳವರಾದರು.</verse>
				<verse number="9">ಇದರ ತರುವಾಯ ಅಸ್ಸೀರಿಯದ ಅರಸನಾದ ಸನ್ಹೇರೀಬನೂ, ಅವನ ಸಂಗಡ ಕೂಡಿರುವ ಅವನ ಸಮಸ್ತ ಬಲವೂ ಲಾಕೀಷನ್ನು ಮುತ್ತಿಗೆ ಹಾಕಿದಾಗ, ಅವನು ಯೆರೂಸಲೇಮಿನಲ್ಲಿರುವ ಯೆಹೂದದ ಅರಸನಾದ ಹಿಜ್ಕೀಯನ ಬಳಿಗೂ, ಯೆರೂಸಲೇಮಿನಲ್ಲಿರುವ ಸಮಸ್ತ ಯೆಹೂದದವರ ಬಳಿಗೂ ತನ್ನ ಸೇವಕರನ್ನು ಕಳುಹಿಸಿದನು.</verse>
				<verse number="10">“ಅಸ್ಸೀರಿಯದ ಅರಸನಾದ ಸನ್ಹೇರೀಬನು ಹೀಗೆ ಹೇಳುತ್ತಾನೆ: ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಯೆರೂಸಲೇಮಿನಲ್ಲಿ ಉಳಿದಿರುವಿರಿ?</verse>
				<verse number="11">‘ನಮ್ಮ ದೇವರಾದ ಯೆಹೋವ ದೇವರು ಅಸ್ಸೀರಿಯದ ಅರಸನ ಕೈಯಿಂದ ನಮ್ಮನ್ನು ಬಿಡಿಸುವರು,’ ಎಂದು ಹಿಜ್ಕೀಯನು ಹೇಳಿ, ನಿಮ್ಮನ್ನು ಹಸಿವೆ ಮತ್ತು ದಾಹದಿಂದ ಸಾಯಿಸುವುದಕ್ಕೆ ಒಪ್ಪಿಸಿಕೊಡಲು ಪ್ರೇರೇಪಿಸುತ್ತಾನಲ್ಲವೇ?</verse>
				<verse number="12">ಈ ಹಿಜ್ಕೀಯನು ಅವನ ಪೂಜಾಸ್ಥಳಗಳನ್ನೂ, ಬಲಿಪೀಠಗಳನ್ನೂ ತೆಗೆದುಹಾಕಿ ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ, ‘ನೀವು ಒಂದೇ ಬಲಿಪೀಠದ ಮುಂದೆ ಅಡ್ಡಬಿದ್ದು, ಅದರ ಮೇಲೆ ಧೂಪವನ್ನರ್ಪಿಸಬೇಕು,’ ಎಂದು ಹೇಳಿದ್ದಾನಲ್ಲವೇ?</verse>
				<verse number="13">“ನಾನೂ, ನನ್ನ ಪಿತೃಗಳು ದೇಶಗಳ ಜನರಿಗೆ ಮಾಡಿದ್ದನ್ನು ನೀವು ತಿಳಿಯಲಿಲ್ಲವೋ? ಆ ದೇಶಗಳ ಜನಾಂಗಗಳ ದೇವರುಗಳು ಆ ದೇಶಗಳನ್ನು ನನ್ನ ಕೈಯೊಳಗಿಂದ ಹೇಗಾದರೂ ಬಿಡಿಸಲು ಸಾಮರ್ಥ್ಯವಿತ್ತೋ?</verse>
				<verse number="14">ನನ್ನ ಪಿತೃಗಳು ನಿರ್ಮೂಲ ಮಾಡಿದ ಆ ಜನಾಂಗಗಳ ಸಮಸ್ತ ದೇವರುಗಳಲ್ಲಿ ನನ್ನ ಕೈಯಿಂದ ತನ್ನ ಜನರನ್ನು ಬಿಡಿಸಲು ಸಾಮರ್ಥ್ಯವುಳ್ಳದ್ದು ಯಾವುದು? ಹಾಗಾದರೆ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?</verse>
				<verse number="15">ಆದ್ದರಿಂದ ಹಿಜ್ಕೀಯನು ನಿಮ್ಮನ್ನು ವಂಚಿಸಿ ನಿಮ್ಮನ್ನು ದಾರಿತಪ್ಪಿಸಲು ಬಿಡಬೇಡಿರಿ. ಅವನ ಮಾತು ನಂಬಬೇಡಿರಿ. ನನ್ನ ಕೈಯೊಳಗಿಂದಲೂ, ನನ್ನ ಪಿತೃಗಳ ಕೈಯೊಳಗಿಂದಲೂ ತಮ್ಮ ಜನರನ್ನು ಬಿಡಿಸಲು ಸಕಲ ಜನಾಂಗ, ರಾಜ್ಯಗಳ ದೇವರುಗಳಲ್ಲಿ ಸಾಮರ್ಥ್ಯವುಳ್ಳ ದೇವರು ಒಂದೂ ಇಲ್ಲ. ನನ್ನ ಕೈಯಿಂದ ನಿಮ್ಮನ್ನು ಬಿಡಿಸಲು ನಿಮ್ಮ ದೇವರು ಎಷ್ಟರವನು? ಅನ್ನುತ್ತಾನೆ,” ಎಂದು ಹೇಳಿದರು.</verse>
				<verse number="16">ಹೀಗೆ ಅವನ ಸೇವಕರು ಇನ್ನೂ ದೇವರಾದ ಯೆಹೋವ ದೇವರಿಗೆ ವಿರೋಧವಾಗಿಯೂ, ಅವರ ಸೇವಕನಾದ ಹಿಜ್ಕೀಯನಿಗೆ ವಿರೋಧವಾಗಿಯೂ ಮಾತನಾಡಿದರು.</verse>
				<verse number="17">ಇದಲ್ಲದೆ ಅವನು ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ನಿಂದಿಸುವುದಕ್ಕೂ, ಅವರಿಗೆ ವಿರೋಧವಾಗಿ ಮಾತನಾಡುವುದಕ್ಕೂ ಪತ್ರಗಳನ್ನು ಬರೆದನು. ಅದರಲ್ಲಿ, “ಇತರ ದೇಶಗಳ ಜನಾಂಗಗಳ ದೇವರುಗಳು, ತಮ್ಮ ಜನರನ್ನು ನನ್ನ ಕೈಯೊಳಗಿಂದ ಹೇಗೆ ಬಿಡಿಸಲಿಲ್ಲವೋ, ಹಾಗೆಯೇ ಹಿಜ್ಕೀಯನ ದೇವರು ತನ್ನ ಜನರನ್ನು ನನ್ನ ಕೈಯೊಳಗಿಂದ ಬಿಡಿಸನು,” ಎಂದು ಬರೆದಿತ್ತು.</verse>
				<verse number="18">ಇದಲ್ಲದೆ ಅವರು ಪಟ್ಟಣವನ್ನು ಹಿಡಿಯುವ ಹಾಗೆ ಗೋಡೆಯ ಮೇಲೆ ಇರುವ ಯೆರೂಸಲೇಮಿನಲ್ಲಿರುವ ಜನರನ್ನು ಭಯಪಡಿಸುವುದಕ್ಕೂ, ಯೆಹೂದ್ಯರ ಭಾಷೆಯಾದ ಹಿಬ್ರಿಯದಲ್ಲಿ ದೊಡ್ಡ ಶಬ್ದದಿಂದ ಅವರನ್ನು ಕೂಗಿದರು.</verse>
				<verse number="19">ಮನುಷ್ಯರ ಕೈಕೆಲಸವಾದ ಭೂಮಿಯ ಜನರ ದೇವರುಗಳಿಗೆ ವಿರೋಧವಾಗಿ ಮಾತನಾಡಿದ ಹಾಗೆ, ಯೆರೂಸಲೇಮಿನ ದೇವರಿಗೆ ವಿರೋಧವಾಗಿ ಮಾತನಾಡಿದರು.</verse>
				<verse number="20">ಇದರ ನಿಮಿತ್ತ ಅರಸನಾದ ಹಿಜ್ಕೀಯನೂ, ಆಮೋಚನ ಮಗನಾದ ಪ್ರವಾದಿಯಾದ ಯೆಶಾಯನೂ ಪ್ರಾರ್ಥನೆಮಾಡಿ ಪರಲೋಕಕ್ಕೆ ಕೂಗಿದರು.</verse>
				<verse number="21">ಆಗ ಯೆಹೋವ ದೇವರು ತಮ್ಮ ದೂತನನ್ನು ಕಳುಹಿಸಿದರು. ಅವನು ಅಸ್ಸೀರಿಯದ ಅರಸನ ದಂಡಿನಲ್ಲಿರುವ ಸಮಸ್ತ ಪರಾಕ್ರಮಶಾಲಿಗಳನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ನಿರ್ಮೂಲ ಮಾಡಿದನು. ಹೀಗೆ ಇವನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿದನು. ಅವನು ತನ್ನ ದೇವರ ಆಲಯದಲ್ಲಿ ಪ್ರವೇಶಿಸಿದಾಗ, ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಖಡ್ಗದಿಂದ ಕೊಂದುಹಾಕಿದರು.</verse>
				<verse number="22">ಹೀಗೆ ಯೆಹೋವ ದೇವರು ಹಿಜ್ಕೀಯನನ್ನೂ, ಯೆರೂಸಲೇಮಿನ ನಿವಾಸಿಗಳನ್ನೂ, ಅಸ್ಸೀರಿಯದ ಅರಸನಾದ ಸನ್ಹೇರೀಬನ ಕೈಯೊಳಗಿಂದಲೂ, ಸಮಸ್ತರ ಕೈಯೊಳಗಿಂದಲೂ ರಕ್ಷಿಸಿ, ಸಮಸ್ತ ಕಡೆಯಿಂದ ಅವರನ್ನು ನಡೆಸಿದರು.</verse>
				<verse number="23">ಅನೇಕರು ಯೆರೂಸಲೇಮಿನಲ್ಲಿರುವ ಯೆಹೋವ ದೇವರಿಗೆ ಅರ್ಪಣೆಗಳನ್ನೂ, ಯೆಹೂದದ ಅರಸನಾದ ಹಿಜ್ಕೀಯನಿಗೆ ಕಾಣಿಕೆಗಳನ್ನೂ ತಂದರು. ಅಂದಿನಿಂದ ಅವನು ಸಮಸ್ತ ಜನಾಂಗಗಳ ಮುಂದೆ ಉನ್ನತವಾಗಿದ್ದನು.</verse>
				<verse number="24">ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಅವನು ಯೆಹೋವ ದೇವರನ್ನು ಪ್ರಾರ್ಥಿಸಲು, ದೇವರು ಅವನ ಸಂಗಡ ಮಾತನಾಡಿ ಅವನಿಗೆ ಒಂದು ಅದ್ಭುತವಾದ ಗುರುತನ್ನು ಕೊಟ್ಟರು.</verse>
				<verse number="25">ಆದರೆ ಹಿಜ್ಕೀಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಹೋದನು. ಏಕೆಂದರೆ ಅವನ ಹೃದಯವು ಅಹಂಕಾರದಿಂದ ತುಂಬಿತ್ತು. ಆದ್ದರಿಂದ ಅವನ ಮೇಲೆಯೂ, ಯೆಹೂದ ಮತ್ತು ಯೆರೂಸಲೇಮಿನ ಮೇಲೆಯೂ ಯೆಹೋವ ದೇವರ ರೌದ್ರ ಉಂಟಾಯಿತು.</verse>
				<verse number="26">ಅನಂತರ ಹಿಜ್ಕೀಯನೂ, ಯೆರೂಸಲೇಮಿನ ನಿವಾಸಿಗಳೂ ತಮ್ಮ ಹೃದಯದ ಗರ್ವದ ವಿಷಯದಲ್ಲಿ ತಮ್ಮನ್ನು ತಾವು ತಗ್ಗಿಸಿಕೊಂಡದ್ದರಿಂದ, ಹಿಜ್ಕೀಯನ ದಿವಸಗಳಲ್ಲಿ ಯೆಹೋವ ದೇವರ ರೌದ್ರವು ಅವರ ಮೇಲೆ ಬರಲಿಲ್ಲ.</verse>
				<verse number="27">ಹಿಜ್ಕೀಯನಿಗೆ ಅತ್ಯಧಿಕವಾದ ಐಶ್ವರ್ಯವೂ, ಘನವೂ ಇದ್ದುದರಿಂದ, ಅವನು ಬೆಳ್ಳಿಗೋಸ್ಕರವೂ, ಬಂಗಾರಕ್ಕೋಸ್ಕರವೂ, ರತ್ನಗಳಿಗೋಸ್ಕರವೂ, ಸುಗಂಧ ದ್ರವ್ಯಗಳಿಗೋಸ್ಕರವೂ, ಗುರಾಣಿಗಳಿಗೋಸ್ಕರವೂ, ಎಲ್ಲಾ ವಿಧದ ಮನೋಹರವಾದ ಆಭರಣಗಳಿಗೋಸ್ಕರವೂ ತನಗೆ ಉಗ್ರಾಣಗಳನ್ನು ಮಾಡಿಸಿದನು.</verse>
				<verse number="28">ಇದಲ್ಲದೆ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನೂ, ಸಕಲ ವಿಧವಾದ ಪಶುಗಳ ನಿಮಿತ್ತವಾಗಿ ಕೊಟ್ಟಿಗೆಗಳನ್ನೂ, ಕುರಿಮಂದೆಯ ನಿಮಿತ್ತವಾಗಿ ಹಟ್ಟಿಗಳನ್ನೂ ಮಾಡಿದನು.</verse>
				<verse number="29">ಇದಲ್ಲದೆ ತನಗೆ ಪಟ್ಟಣಗಳನ್ನೂ, ದನಕುರಿಗಳ ದೊಡ್ಡ ಹಿಂಡುಗಳನ್ನೂ ಬಹಳವಾಗಿ ಮಾಡಿಕೊಂಡನು. ಏಕೆಂದರೆ ದೇವರು ಅವನಿಗೆ ಬಹು ಹೆಚ್ಚಾಗಿ ಸಂಪತ್ತನ್ನು ಕೊಟ್ಟರು.</verse>
				<verse number="30">ಈ ಹಿಜ್ಕೀಯನು ಗೀಹೋನೆಂಬ ಮೇಲಿನ ಕಾಲುವೆಯನ್ನು ಮುಚ್ಚಿಬಿಟ್ಟು, ಅದನ್ನು ದಾವೀದನ ಪಟ್ಟಣದಲ್ಲಿ ಪಶ್ಚಿಮ ದಿಕ್ಕಿಗೆ ಕಾಲುವೆಯಾಗಿ ಬರಮಾಡಿದನು. ಹೀಗೆಯೇ ಹಿಜ್ಕೀಯನು ತನ್ನ ಸಮಸ್ತ ಕ್ರಿಯೆಗಳಲ್ಲಿ ವೃದ್ಧಿಹೊಂದಿದನು.</verse>
				<verse number="31">ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾರಣೆ ಮಾಡಲು ಬಾಬಿಲೋನಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲಾದ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದಲ್ಲಿ ಇರುವ ಪ್ರತಿಯೊಂದನ್ನೂ ತಿಳಿದುಕೊಳ್ಳುವದಕ್ಕಾಗಿಯೂ ಪರಿಶೋಧಿಸುವುದಕ್ಕಾಗಿಯೂ ದೇವರು ಅವನನ್ನು ಕೈಬಿಟ್ಟರು.</verse>
				<verse number="32">ಹಿಜ್ಕೀಯನ ಇತರ ಕಾರ್ಯಗಳೂ ಅವನ ಭಕ್ತಿಕಾರ್ಯಗಳೂ ಆಮೋಚನ ಮಗ ಪ್ರವಾದಿಯಾದ ಯೆಶಾಯನ ದರ್ಶನದ ಪುಸ್ತಕದಲ್ಲಿ ಮತ್ತು ಯೆಹೂದ ಇಸ್ರಾಯೇಲ್ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="33">ಹಿಜ್ಕೀಯನು ತನ್ನ ಪಿತೃಗಳ ಬಳಿಗೆ ಸೇರಿದನು. ಅವರು ದಾವೀದನ ಮಕ್ಕಳ ಸಮಾಧಿಗಳಲ್ಲಿರುವ ಶ್ರೇಷ್ಠವಾದುದರಲ್ಲಿ ಅವನನ್ನು ಹೂಳಿಟ್ಟರು. ಅವನ ಮರಣದಲ್ಲಿ ಸಮಸ್ತ ಯೆಹೂದದವರೂ, ಯೆರೂಸಲೇಮಿನ ನಿವಾಸಿಗಳೂ ಅವನನ್ನು ಘನಪಡಿಸಿದರು. ಅವನ ಮಗ ಮನಸ್ಸೆಯು ಅವನಿಗೆ ಬದಲಾಗಿ ಅರಸನಾದನು.</verse>
			</chapter>
			<chapter number="33">
				<verse number="1">ಮನಸ್ಸೆಯು ಅರಸನಾದಾಗ ಹನ್ನೆರಡು ವರ್ಷದವನಾಗಿದ್ದನು. ಅವನು ಐವತ್ತೈದು ವರ್ಷ ಯೆರೂಸಲೇಮಿನಲ್ಲಿ ಆಳಿದನು.</verse>
				<verse number="2">ಆದರೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಜನಾಂಗಗಳ ಅಸಹ್ಯವಾದವುಗಳನ್ನು ಅವನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.</verse>
				<verse number="3">ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ, ಬಾಳನಿಗೆ ಬಲಿಪೀಠಗಳನ್ನು ಕಟ್ಟಿಸಿ, ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ಸಮಸ್ತ ನಕ್ಷತ್ರಮಂಡಲಕ್ಕೆ ಅಡ್ಡಬಿದ್ದು ಅವುಗಳನ್ನು ಪೂಜಿಸಿದನು.</verse>
				<verse number="4">ಇದಲ್ಲದೆ ಯೆರೂಸಲೇಮಿನಲ್ಲಿ, “ನನ್ನ ಹೆಸರು ಯುಗಯುಗಕ್ಕೂ ಇರುವುದು,” ಎಂದು ಯೆಹೋವ ದೇವರು ಯಾವುದನ್ನು ಕುರಿತು ಹೇಳಿದ್ದರೋ, ಆ ಆಲಯದಲ್ಲಿ ಅವನು ಬಹಳ ಬಲಿಪೀಠಗಳನ್ನು ಕಟ್ಟಿಸಿದನು.</verse>
				<verse number="5">ಯೆಹೋವ ದೇವರ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಸಮಸ್ತ ನಕ್ಷತ್ರಮಂಡಲಕ್ಕಾಗಿ ಬಲಿಪೀಠಗಳನ್ನು ಕಟ್ಟಿಸಿದನು.</verse>
				<verse number="6">ಇದಲ್ಲದೆ ಮನಸ್ಸೆಯು ಬೆನ್ ಹಿನ್ನೋಮ್ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನೂ ಮಾಟವನ್ನೂ ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.</verse>
				<verse number="7">ಮನಸ್ಸೆಯು ತಾನು ಮಾಡಿದ ವಿಗ್ರಹವನ್ನು ದೇವರ ಆಲಯದಲ್ಲಿ ಇಟ್ಟನು. ಆ ಆಲಯದ ಬಗ್ಗೆ ದೇವರು ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ ಹೇಳಿದ್ದೇನೆಂದರೆ, “ನಾನು ಈ ಆಲಯದಲ್ಲಿ ಮತ್ತು ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನಾನು ಆಯ್ದುಕೊಂಡ ಯೆರೂಸಲೇಮಿನಲ್ಲಿ ನನ್ನ ನಾಮವನ್ನು ಶಾಶ್ವತವಾಗಿ ಸ್ಥಾಪಿಸುತ್ತೇನೆ.</verse>
				<verse number="8">ನಾನು ಮೋಶೆಯ ಮುಖಾಂತರ ಆಜ್ಞಾಪಿಸಿದ ಎಲ್ಲಾ ಅಪ್ಪಣೆಗಳನ್ನೂ, ಕಾನೂನುಗಳನ್ನೂ, ವಿಧಿಗಳನ್ನೂ ಕೈಗೊಂಡು ನಡೆಯುವುದರಲ್ಲಿ ಅವರು ಜಾಗರೂಕರಾಗಿದ್ದರೆ, ನಾನು ಅವರ ಪಿತೃಗಳಿಗೆ ನೇಮಕ ಮಾಡಿದ ದೇಶವನ್ನು ಪುನಃ ಇಸ್ರಾಯೇಲರು ಬಿಟ್ಟುಹೋಗುವಂತೆ ಮಾಡುವುದಿಲ್ಲ,” ಎಂದು ಹೇಳಿದ್ದರು.</verse>
				<verse number="9">ಆದರೆ ಯೆಹೂದದವರೂ ಯೆರೂಸಲೇಮಿನ ನಿವಾಸಿಗಳೂ ಇಸ್ರಾಯೇಲರ ಮುಂದೆಯೇ ಯೆಹೋವ ದೇವರಿಂದ ನಾಶಹೊಂದಿದ ಇತರ ಜನಾಂಗಗಳಿಗಿಂತ ಅಧಿಕವಾಗಿ ಕೆಟ್ಟದ್ದನ್ನು ಮಾಡಲು ಮನಸ್ಸೆಯು ಅವರನ್ನು ಪ್ರೇರೇಪಿಸಿದನು.</verse>
				<verse number="10">ಯೆಹೋವ ದೇವರು ಮನಸ್ಸೆಯೊಂದಿಗೂ, ಅವನ ಜನರೊಂದಿಗೂ ಮಾತನಾಡಿದರು. ಆದರೆ ಅವರು ಲಕ್ಷಿಸಲಿಲ್ಲ.</verse>
				<verse number="11">ಆದಕಾರಣ ಯೆಹೋವ ದೇವರು ಅಸ್ಸೀರಿಯದ ಅರಸನ ಸೈನ್ಯದ ಅಧಿಪತಿಗಳನ್ನೂ ಅವನ ಮೇಲೆ ಬರಮಾಡಿದರು. ಆ ಅಧಿಪತಿಗಳು ಮನಸ್ಸೆಯ ಮೂಗಿಗೆ ಕೊಂಡಿಗಳನ್ನು ಹಾಕಿ, ಅವನಿಗೆ ಕಂಚಿನ ಸಂಕೋಲೆಗಳಿಂದ ಬಂಧಿಸಿ, ಅವನನ್ನು ಬಾಬಿಲೋನಿಗೆ ಒಯ್ದರು.</verse>
				<verse number="12">ಮನಸ್ಸೆಯು ಬಾಧೆಯಲ್ಲಿರುವಾಗ ತನ್ನ ದೇವರಾದ ಯೆಹೋವ ದೇವರನ್ನು ಬೇಡಿಕೊಂಡನು ಮತ್ತು ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಪ್ರಾರ್ಥನೆಮಾಡಿದನು.</verse>
				<verse number="13">ಆಗ ಯೆಹೋವ ದೇವರು ಕನಿಕರಪಟ್ಟು, ಅವನ ಬಿನ್ನಹವನ್ನು ಕೇಳಿ, ಯೆರೂಸಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರುಗಿ ಬರಮಾಡಿದರು. ಆಗ ಯೆಹೋವ ದೇವರೇ ದೇವರೆಂದು ಮನಸ್ಸೆಯು ತಿಳಿದುಕೊಂಡನು.</verse>
				<verse number="14">ಇದಾದ ತರುವಾಯ ಮನಸ್ಸೆಯು ದಾವೀದನ ಪಟ್ಟಣದ ಹೊರಭಾಗದಲ್ಲಿ ಗೀಹೋನಿನ ಪಶ್ಚಿಮ ಕಡೆಯ ತಗ್ಗಿನಲ್ಲಿ ಮೀನು ಬಾಗಿಲ ದ್ವಾರದವರೆಗಿರುವ ತಗ್ಗಿನಲ್ಲಿ ಓಫೇಲ್ ಗುಡ್ಡದ ಸುತ್ತಲೂ ಗೋಡೆಯನ್ನು ಕಟ್ಟಿಸಿ, ಅದನ್ನು ಬಹಳ ಎತ್ತರಮಾಡಿ, ಯೆಹೂದದ ಸಮಸ್ತ ಕೋಟೆಯುಳ್ಳ ಪಟ್ಟಣಗಳಲ್ಲಿ ಸೈನ್ಯದ ಅಧಿಪತಿಗಳನ್ನು ಇಟ್ಟನು.</verse>
				<verse number="15">ಅವನು ಅನ್ಯದೇವರುಗಳನ್ನೂ, ಯೆಹೋವ ದೇವರ ಆಲಯದಲ್ಲಿರುವ ವಿಗ್ರಹವನ್ನೂ ಯೆಹೋವ ದೇವರ ಆಲಯದ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ, ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು.</verse>
				<verse number="16">ಅವನು ಯೆಹೋವ ದೇವರ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ಸಮಾಧಾನದ ಬಲಿಗಳನ್ನೂ, ಸ್ತೋತ್ರದ ಬಲಿಗಳನ್ನೂ ಅರ್ಪಿಸಿ, ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಸೇವಿಸಲು ಯೆಹೂದದವರಿಗೆ ಆಜ್ಞಾಪಿಸಿದನು.</verse>
				<verse number="17">ಜನರು ತಮ್ಮ ದೇವರಾದ ಯೆಹೋವ ದೇವರಿಗೆ ಮಾತ್ರ ಬಲಿಯನ್ನರ್ಪಿಸುವಾಗ, ಇನ್ನೂ ಉನ್ನತ ಸ್ಥಳಗಳಲ್ಲಿಯೇ ಬಲಿಯನ್ನು ಅರ್ಪಿಸುತ್ತಾ ಇದ್ದರು.</verse>
				<verse number="18">ಮನಸ್ಸೆಯ ಇತರ ಕ್ರಿಯೆಗಳೂ, ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ, ಇಸ್ರಾಯೇಲಿನ ದೇವರಾದ ಯೆಹೋವ ದೇವರ ನಾಮದಲ್ಲಿ ಅವನ ಸಂಗಡ ಮಾತನಾಡಿದ ಪ್ರವಾದಿಗಳ ಮಾತುಗಳೂ, ಇಸ್ರಾಯೇಲಿನ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.</verse>
				<verse number="19">ಇದಲ್ಲದೆ ಅವನ ಪ್ರಾರ್ಥನೆಯೂ, ಅವನು ದೇವರಿಗೆ ಭಿನ್ನವಿಸಿದ್ದೂ, ಅವನ ಸಮಸ್ತ ಪಾಪವೂ, ಅವನ ಅಪನಂಬಿಕೆಯೂ, ಅವನು ತಗ್ಗಿಸಿಕೊಳ್ಳುವುದಕ್ಕಿಂತ ಮುಂಚೆ ಕಟ್ಟಿಸಿದ ಉನ್ನತ ಸ್ಥಳಗಳನ್ನೂ, ನಿಲ್ಲಿಸಿದ ಅಶೇರ ಸ್ತಂಭಗಳೂ, ಕೆತ್ತಿಸಿದ ವಿಗ್ರಹಗಳೂ, ಸ್ಥಾಪಿಸಿದ ಸ್ಥಳಗಳೂ ಪ್ರವಾದಿಗಳ ದಾಖಲೆಗಳಲ್ಲಿ ಬರೆದಿರುತ್ತವೆ.</verse>
				<verse number="20">ಮನಸ್ಸೆಯು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನನ್ನು ಅವನ ಅರಮನೆಯಲ್ಲಿ ಹೂಳಿಟ್ಟರು. ಅವನ ಮಗ ಆಮೋನನು ಅವನಿಗೆ ಬದಲಾಗಿ ಅರಸನಾದನು.</verse>
				<verse number="21">ಆಮೋನನು ಅರಸನಾದಾಗ ಇಪ್ಪತ್ತೆರಡು ವರ್ಷದವನಾಗಿದ್ದನು, ಅವನು ಯೆರೂಸಲೇಮಿನಲ್ಲಿ ಎರಡು ವರ್ಷ ಆಳಿದನು.</verse>
				<verse number="22">ಆದರೆ ಅವನು ತನ್ನ ತಂದೆ ಮನಸ್ಸೆಯು ಮಾಡಿದ ಹಾಗೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನೇ ಮಾಡಿದನು. ಆಮೋನನು ತನ್ನ ತಂದೆ ಮನಸ್ಸೆಯು ಮಾಡಿದ ಕೆತ್ತಿದ ವಿಗ್ರಹಗಳಿಗೆ ಬಲಿಗಳನ್ನು ಅರ್ಪಿಸಿ ಅವುಗಳನ್ನು ಪೂಜಿಸಿದನು.</verse>
				<verse number="23">ಆಮೋನನು ತನ್ನ ತಂದೆ ಮನಸ್ಸೆಯು ತನ್ನನ್ನು ತಗ್ಗಿಸಿಕೊಂಡ ಹಾಗೆ, ಯೆಹೋವ ದೇವರ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ. ಆದರೆ ಆಮೋನನು ಅಧಿಕವಾಗಿ ಅಪರಾಧ ಮಾಡಿದನು.</verse>
				<verse number="24">ಆದ್ದರಿಂದ ಆಮೋನನ ಸೇವಕರು ಅವನ ವಿರುದ್ಧ ಒಳಸಂಚುಮಾಡಿ, ಅವನ ಅರಮನೆಯಲ್ಲಿಯೇ ಅವನನ್ನು ಕೊಂದುಹಾಕಿದರು.</verse>
				<verse number="25">ಆದರೆ ದೇಶದ ಜನರು ಅರಸನಾದ ಆಮೋನನ ವಿರುದ್ಧ ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ, ದೇಶದ ಜನರು ಅವನ ಮಗ ಯೋಷೀಯನನ್ನು ಅವನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.</verse>
			</chapter>
			<chapter number="34">
				<verse number="1">ಯೋಷೀಯನು ಅರಸನಾದಾಗ ಎಂಟು ವರ್ಷದವನಾಗಿದ್ದನು, ಅವನು ಮೂವತ್ತೊಂದು ವರ್ಷ ಯೆರೂಸಲೇಮಿನಲ್ಲಿ ಆಳಿದನು.</verse>
				<verse number="2">ಅವನು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದನ್ನು ಮಾಡಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗದೆ ತನ್ನ ಪೂರ್ವಜನಾದ ದಾವೀದನ ಮಾರ್ಗಗಳಲ್ಲಿಯೇ ನಡೆದನು.</verse>
				<verse number="3">ಅವನು ಇನ್ನೂ ಬಾಲಕನಾಗಿರುವಾಗ, ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ತನ್ನ ಪೂರ್ವಜನಾದ ದಾವೀದನ ದೇವರನ್ನು ಹುಡುಕಲು ಆರಂಭಿಸಿದನು. ಅವನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಉನ್ನತ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ ತೆಗೆದುಹಾಕಿ, ಯೆಹೂದ ಮತ್ತು ಯೆರೂಸಲೇಮನ್ನು ಶುಚಿಮಾಡಲು ಆರಂಭಿಸಿದನು.</verse>
				<verse number="4">ಅವರು ಬಾಳನ ಬಲಿಪೀಠಗಳನ್ನು ಅವನ ಸಮ್ಮುಖದಿಂದ ಕೆಡವಿಹಾಕಿದರು. ಅವುಗಳ ಮೇಲಿರುವ ಸೂರ್ಯ ಸ್ತಂಭಗಳನ್ನು ಕಡಿದುಹಾಕಿ; ಅಶೇರ ಸ್ತಂಭಗಳನ್ನೂ, ಕೆತ್ತಿದ ವಿಗ್ರಹಗಳನ್ನೂ, ಎರಕ ಹೊಯ್ದ ವಿಗ್ರಹಗಳನ್ನೂ ಒಡೆದುಬಿಟ್ಟು ಪುಡಿಪುಡಿಮಾಡಿ, ಅವುಗಳಿಗೆ ಬಲಿ ಅರ್ಪಿಸಿದವರ ಸಮಾಧಿಗಳ ಮೇಲೆ ಚಿಲ್ಲಿಸಿ,</verse>
				<verse number="5">ಪೂಜಾರಿಗಳ ಎಲುಬುಗಳನ್ನು ಅವರ ಬಲಿಪೀಠಗಳ ಮೇಲೆ ಸುಟ್ಟುಬಿಟ್ಟು; ಯೆಹೂದ ಪ್ರಾಂತ್ಯವನ್ನೂ, ಯೆರೂಸಲೇಮ ಪಟ್ಟಣವನ್ನೂ ಶುಚಿಮಾಡಿದರು.</verse>
				<verse number="6">ಹೀಗೆಯೇ ಅವರು ತಮ್ಮ ಗುದ್ದಲಿಗಳಿಂದ ಮನಸ್ಸೆ, ಎಫ್ರಾಯೀಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಪಟ್ಟಣಗಳ ಸುತ್ತಲೂ ಶುಚಿಮಾಡಿದರು.</verse>
				<verse number="7">ಅವನು ಬಲಿಪೀಠಗಳನ್ನೂ, ಅಶೇರ ಸ್ತಂಭಗಳನ್ನೂ ಕೆಡವಿಹಾಕಿ, ಕೆತ್ತಿದ ವಿಗ್ರಹಗಳನ್ನು ಕುಟ್ಟಿ ಪುಡಿಪುಡಿಮಾಡಿ, ಇಸ್ರಾಯೇಲ್ ದೇಶದಲ್ಲೆಲ್ಲಿಯೂ ಇರುವ ಸಮಸ್ತ ವಿಗ್ರಹಗಳನ್ನು ಕೆಡವಿದ ತರುವಾಯ ಯೆರೂಸಲೇಮಿಗೆ ಹಿಂದಿರುಗಿದನು.</verse>
				<verse number="8">ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ, ಅವನು ದೇಶವನ್ನೂ, ಆಲಯವನ್ನೂ ಶುಚಿ ಮಾಡಿದ ತರುವಾಯ ತನ್ನ ದೇವರಾದ ಯೆಹೋವ ದೇವರ ಆಲಯವನ್ನು ದುರಸ್ತಿ ಮಾಡುವುದಕ್ಕೆ ಅಚಲ್ಯನ ಮಗನಾದ ಶಾಫಾನನನ್ನೂ, ಪಟ್ಟಣದ ಅಧಿಪತಿಯಾದ ಮಾಸೇಯನನ್ನೂ, ರಾಜಲೇಖಕನಾಗಿದ್ದ ಯೋವಾಹಾಜನ ಮಗನಾದ ಯೋವಾಹನನ್ನೂ ಕಳುಹಿಸಿದನು.</verse>
				<verse number="9">ಇವರು ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಾಯೀಮ್ ಜನರಿಂದಲೂ, ಇಸ್ರಾಯೇಲಿನ ಉಳಿದವರಿಂದಲೂ, ಯೆಹೂದ ಬೆನ್ಯಾಮೀನರಿಂದಲೂ ಯೆರೂಸಲೇಮಿನ ಎಲ್ಲಾ ನಿವಾಸಿಗಳಿಂದಲೂ ಕೂಡಿಸಿದ ಹಣವನ್ನು ತೆಗೆದುಕೊಂಡು ದೇವರ ಆಲಯಕ್ಕೆ ತಂದು ಮಹಾಯಾಜಕನಾದ ಹಿಲ್ಕೀಯನಿಗೆ ಕೊಟ್ಟರು.</verse>
				<verse number="10">ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಇವರು ಯೆಹೋವ ದೇವರ ಆಲಯವನ್ನು ಭದ್ರಮಾಡಿ, ದುರಸ್ತಿ ಮಾಡುವವರಿಗೆ ಅದನ್ನು ಕೊಟ್ಟರು.</verse>
				<verse number="11">ಕೆತ್ತಿದ ಕಲ್ಲುಗಳನ್ನೂ, ತೊಲೆಗಳಿಗೋಸ್ಕರ ಮರಗಳನ್ನೂ, ಯೆಹೂದದ ಅರಸರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಹಲಿಗೆಗಳನ್ನು ಕೊಂಡುಕೊಳ್ಳಲೂ, ಬಡಗಿಯರಿಗೂ, ಕಲ್ಲುಕೆಲಸದವರಿಗೂ ಆ ಹಣವನ್ನು ಕೊಟ್ಟರು.</verse>
				<verse number="12">ಈ ಮನುಷ್ಯರು ಕೆಲಸವನ್ನು ನಂಬಿಕೆಯಿಂದ ಮಾಡಿದರು. ಅವರ ವಿಚಾರಣೆಯ ಮೇಲ್ವಿಚಾರಕರು ಯಾರೆಂದರೆ ಮೆರಾರೀಯ ಪುತ್ರರಲ್ಲಿ ಲೇವಿಯರಾದ ಯಹಾತನೂ, ಓಬದ್ಯನೂ; ಕೊಹಾತ್ಯರ ಮಕ್ಕಳಲ್ಲಿ ಜೆಕರ್ಯನೂ, ಮೆಷುಲ್ಲಾಮನೂ; ಗೀತವಾದ್ಯಗಳಲ್ಲಿ ಬುದ್ಧಿಯುಳ್ಳವರಾದ ಲೇವಿಯರೆಲ್ಲರೂ ಅದನ್ನು ನಡೆಸುತ್ತಾ ಇದ್ದರು.</verse>
				<verse number="13">ಇದಲ್ಲದೆ ಕಾರ್ಮಿಕರ ಮೇಲೆಯೂ, ಬೇರೆ ಬೇರೆ ಸೇವೆಯ ಕೆಲಸವನ್ನು ಮಾಡುವವರ ಮೇಲೆಯೂ ಅವರು ಮೇಲ್ವಿಚಾರಕರಾಗಿದ್ದರು. ಲೇವಿಯರಲ್ಲಿ ಕೆಲವರು ಕಾರ್ಯದರ್ಶಿಗಳೂ, ಬರಹಗಾರರೂ, ದ್ವಾರಪಾಲಕರೂ ಆಗಿದ್ದರು.</verse>
				<verse number="14">ಯೆಹೋವ ದೇವರ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತೆಗೆದುಕೊಂಡು ಬರುವಾಗ, ಯಾಜಕನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಯೆಹೋವ ದೇವರ ನಿಯಮದ ಗ್ರಂಥವನ್ನು ಕಂಡುಕೊಂಡನು.</verse>
				<verse number="15">ಆಗ ಹಿಲ್ಕೀಯನು ಉತ್ತರಕೊಟ್ಟು ಕಾರ್ಯದರ್ಶಿಯಾದ ಶಾಫಾನನಿಗೆ, “ಯೆಹೋವ ದೇವರ ಆಲಯದಲ್ಲಿ ನಿಯಮ ಗ್ರಂಥವು ನನಗೆ ಸಿಕ್ಕಿತು,” ಎಂದು ಹೇಳಿದನು. ಹಿಲ್ಕೀಯನು ಆ ಗ್ರಂಥವನ್ನು ಶಾಫಾನನಿಗೆ ಒಪ್ಪಿಸಿದನು.</verse>
				<verse number="16">ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡುಹೋಗಿ, ಅರಸನಿಗೆ ಈ ಮಾತನ್ನು ತಿರುಗಿ ಹೇಳಿದನು. “ನಿನ್ನ ಸೇವಕರ ಕೈಗೆ ಒಪ್ಪಿಸಿದ್ದನ್ನೆಲ್ಲಾ ಅವರು ಮಾಡುತ್ತಿದ್ದಾರೆ.</verse>
				<verse number="17">ಇದಲ್ಲದೆ ಅವರು ಯೆಹೋವ ದೇವರ ಆಲಯದಲ್ಲಿ ದೊರಕಿದ ಹಣವನ್ನು ತೆಗೆದು ಮೇಲ್ವಿಚಾರಕರ ಕೈಯಲ್ಲಿ ಮತ್ತು ಕೆಲಸದವರ ಕೈಯಲ್ಲಿ ಒಪ್ಪಿಸಿದ್ದಾರೆ.</verse>
				<verse number="18">ಕಾರ್ಯದರ್ಶಿಯಾದ ಶಾಫಾನನು ಅರಸನಿಗೆ ಯಾಜಕನಾದ ಹಿಲ್ಕೀಯನು ನನಗೆ ಗ್ರಂಥವನ್ನು ಕೊಟ್ಟಿದ್ದಾನೆ,” ಎಂದು ತಿಳಿಸಿದನು. ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು.</verse>
				<verse number="19">ಅರಸನು ದೇವರ ನಿಯಮದ ವಾಕ್ಯಗಳನ್ನು ಕೇಳಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡನು.</verse>
				<verse number="20">ಹಿಲ್ಕೀಯನಿಗೂ, ಶಾಫಾನನ ಮಗನಾದ ಅಹೀಕಾಮನಿಗೂ, ಮೀಕನ ಮಗನಾದ ಅಬ್ದೋನನಿಗೂ, ಕಾರ್ಯದರ್ಶಿಯಾದ ಶಾಫಾನನಿಗೂ, ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ,</verse>
				<verse number="21">“ನೀವು ಹೋಗಿ ಸಿಕ್ಕಿದ ಈ ಗ್ರಂಥದ ವಾಕ್ಯಗಳ ಕುರಿತು ನನಗೋಸ್ಕರವೂ, ಇಸ್ರಾಯೇಲ್ ಮತ್ತು ಯೆಹೂದದಲ್ಲಿ ಉಳಿದವರಿಗೋಸ್ಕರವೂ ಯೆಹೋವ ದೇವರ ಬಳಿಯಲ್ಲಿ ವಿಚಾರಿಸಿರಿ. ಏಕೆಂದರೆ ನಮ್ಮನ್ನು ಕುರಿತು ಬರೆದಿರುವ ಎಲ್ಲವನ್ನೂ ಕೈಗೊಂಡು ನಡೆಯಲು ನಮ್ಮ ಪಿತೃಗಳು ಈ ಗ್ರಂಥದ ಮಾತುಗಳನ್ನು ಕೇಳದೆ ಹೋದುದರಿಂದ, ನಮ್ಮ ಮೇಲೆ ಸುರಿದ ಯೆಹೋವ ದೇವರ ಕೋಪವು ದೊಡ್ಡದಾಗಿದೆ,” ಎಂದು ಹೇಳಿದನು.</verse>
				<verse number="22">ಆಗ ಹಿಲ್ಕೀಯನೂ ಅರಸನ ಜನರೂ ಹಸ್ರನ ಮಗನೂ ತೊಕ್ಹತನ ಮಗನೂ ಪ್ರವಾದಿನಿ ಹುಲ್ದಳ ಬಳಿಗೆ ಹೋಗಿ ವಿಚಾರಿಸಿದರು. ಆಕೆಯು ರಾಜವಸ್ತ್ರಗಳ ಮೇಲ್ವಿಚಾರಕನೂ ಆದ ಶಲ್ಲೂಮನ ಹೆಂಡತಿ, ಅವಳು ಯೆರೂಸಲೇಮಿನೊಳಗೆ ಹೊಸದಾದ ನಿರ್ಮಿತ ಭಾಗದಲ್ಲಿ ವಾಸವಾಗಿದ್ದಳು.</verse>
				<verse number="23">ಹುಲ್ದಳು ಅವರಿಗೆ, “ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಇಸ್ರಾಯೇಲ್ ದೇವರಾದ ಯೆಹೋವ ದೇವರ ಮಾತುಗಳನ್ನು ತಿಳಿಸಿರಿ:</verse>
				<verse number="24">‘ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನೂ, ಯೆಹೂದದ ಅರಸನ ಮುಂದೆ ಅವರು ಓದಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನೂ ಬರಮಾಡುವೆನು.</verse>
				<verse number="25">ಏಕೆಂದರೆ ಅವರು ನನ್ನನ್ನು ಬಿಟ್ಟುಬಿಟ್ಟು, ತಮ್ಮ ಸಮಸ್ತ ಕ್ರಿಯೆಗಳಿಂದ ನನಗೆ ಕೋಪವನ್ನು ಎಬ್ಬಿಸುವಂತೆ ಇತರ ದೇವರುಗಳಿಗೆ ಧೂಪವನ್ನು ಸುಟ್ಟಿದ್ದಾರೆ. ಆದ್ದರಿಂದ ನನ್ನ ಕೋಪವು ಈ ಸ್ಥಳದ ಮೇಲೆ ಸುರಿಯುವುದು, ಅದು ಆರಿಹೋಗುವುದಿಲ್ಲ.’</verse>
				<verse number="26">ಆದರೆ ಯೆಹೋವ ದೇವರನ್ನು ವಿಚಾರಿಸಲು ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದು ಇದೇ, ‘ನೀವು ಕೇಳಿದ ಮಾತುಗಳನ್ನು ಕುರಿತು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ,</verse>
				<verse number="27">ಈ ಸ್ಥಳಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳ ವಿರೋಧವಾಗಿಯೂ ದೇವರು ಹೇಳಿದ ಮಾತುಗಳನ್ನು ನೀನು ಕೇಳಿದಾಗ, ನಿನ್ನ ಹೃದಯವು ಮೃದುವಾಗಿ, ನಿನ್ನನ್ನು ನನ್ನ ಮುಂದೆ ತಗ್ಗಿಸಿಕೊಂಡೆ. ನಿನ್ನ ವಸ್ತ್ರಗಳನ್ನು ಹರಿದುಕೊಂಡು ನನ್ನ ಸಮ್ಮುಖದಲ್ಲಿ ಕಣ್ಣೀರು ಸುರಿಸಿದ್ದರಿಂದ, ನಾನು ನಿನ್ನ ಮೊರೆಯನ್ನು ಕೇಳಿದೆನು,</verse>
				<verse number="28">ಆದ್ದರಿಂದ ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು. ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವೆ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವುದಿಲ್ಲ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದಳು. ಅವರು ಹೋಗಿ ಈ ಉತ್ತರವನ್ನು ಅರಸನಿಗೆ ತಿಳಿಸಿದರು.</verse>
				<verse number="29">ಅನಂತರ ಅರಸನಾದ ಯೋಷೀಯನು ಯೆಹೂದದ, ಯೆರೂಸಲೇಮಿನ ಹಿರಿಯರೆಲ್ಲರನ್ನು ಕರೆಕಳುಹಿಸಿ ತನ್ನ ಬಳಿಯಲ್ಲಿ ಒಟ್ಟಾಗಿ ಕೂಡಿಸಿದನು.</verse>
				<verse number="30">ಆಗ ಅರಸನೂ ಅವನ ಸಂಗಡ ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ ಯಾಜಕರೂ ಲೇವಿಯರೂ ಹಿರಿಕಿರಿಯರಾದ ಸಮಸ್ತ ಜನರೂ ಯೆಹೋವ ದೇವರ ಆಲಯಕ್ಕೆ ಹೋದರು. ಅರಸನು ಯೆಹೋವ ದೇವರ ಆಲಯದಲ್ಲಿ ದೊರಕಿದ ಒಡಂಬಡಿಕೆಯ ಗ್ರಂಥದ ಮಾತುಗಳನ್ನೆಲ್ಲಾ ಅವರು ಕೇಳುವಂತೆ ಓದಿದನು.</verse>
				<verse number="31">ಅರಸನು ತನ್ನ ಸ್ತಂಭದಲ್ಲಿ ನಿಂತುಕೊಂಡು ಯೆಹೋವ ದೇವರನ್ನು ಹಿಂಬಾಲಿಸುವುದಕ್ಕೂ, ದೇವರ ಆಜ್ಞೆಗಳನ್ನೂ, ದೇವರ ಸಾಕ್ಷಿಗಳನ್ನೂ, ಕಟ್ಟಳೆಗಳನ್ನೂ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಕೈಗೊಳ್ಳುವುದಕ್ಕೂ, ಈ ಗ್ರಂಥದಲ್ಲಿ ಬರೆದಿರುವ ಒಡಂಬಡಿಕೆಯ ವಾಕ್ಯಗಳನ್ನು ನೆರವೇರಿಸುವುದಕ್ಕೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿದನು.</verse>
				<verse number="32">ಇದಲ್ಲದೆ ಅವನು ಯೆರೂಸಲೇಮಿನಲ್ಲಿಯೂ, ಬೆನ್ಯಾಮೀನಿನಲ್ಲಿಯೂ ಪ್ರತಿಯೊಬ್ಬರನ್ನು ಅದಕ್ಕೆ ಒಪ್ಪುವಂತೆ ಮಾಡಿದನು. ಹಾಗೆಯೇ ಯೆರೂಸಲೇಮಿನ ನಿವಾಸಿಗಳು ತಮ್ಮ ಪಿತೃಗಳ ದೇವರ ಒಡಂಬಡಿಕೆಯ ಪ್ರಕಾರ ಮಾಡಿದರು.</verse>
				<verse number="33">ಹೀಗೆ ಯೋಷೀಯನು ಇಸ್ರಾಯೇಲರಿಗೆ ಇದ್ದ ಎಲ್ಲಾ ದೇಶಗಳೊಳಗಿಂದ ಸಮಸ್ತ ಅಸಹ್ಯಗಳನ್ನು ತೆಗೆದುಹಾಕಿ, ಇಸ್ರಾಯೇಲಿನಲ್ಲಿ ಸಿಕ್ಕಿದವರೆಲ್ಲರೂ ತಮ್ಮ ದೇವರಾದ ಯೆಹೋವ ದೇವರನ್ನು ಸೇವಿಸುವ ಹಾಗೆ ಮಾಡಿದನು. ಅವನ ದಿವಸಗಳೆಲ್ಲಾ ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಹಿಂಬಾಲಿಸುವುದನ್ನು ಬಿಡದೆ ಇದ್ದರು.</verse>
			</chapter>
			<chapter number="35">
				<verse number="1">ಯೋಷೀಯನು ಯೆರೂಸಲೇಮಿನಲ್ಲಿ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಿದನು. ಮೊದಲನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು.</verse>
				<verse number="2">ಆಗ ಅವನು ಯಾಜಕರನ್ನು ಅವರವರ ಕೆಲಸಗಳಲ್ಲಿ ನಿಲ್ಲಿಸಿ; ಯೆಹೋವ ದೇವರ ಆಲಯದ ಸೇವೆ ಮಾಡುವುದಕ್ಕೆ ಅವರನ್ನು ಪ್ರೋತ್ಸಾಹಿಸಿದನು.</verse>
				<verse number="3">“ಸಮಸ್ತ ಇಸ್ರಾಯೇಲರಿಗೆ ಬೋಧಿಸಿದ ಮತ್ತು ಯೆಹೋವ ದೇವರಿಗೆ ಪ್ರತಿಷ್ಠಿತರಾದ ಲೇವಿಯರಿಗೆ ಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವೆಂದೆಣಿಸದೇ, ನೀವು ಅದನ್ನು ಇಸ್ರಾಯೇಲಿನ ಅರಸನಾಗಿರುವ ದಾವೀದನ ಮಗ ಸೊಲೊಮೋನನು ಕಟ್ಟಿಸಿದ ಆಲಯದಲ್ಲಿ ಇರಿಸಿ, ನಿಮ್ಮ ದೇವರಾದ ಯೆಹೋವ ದೇವರನ್ನೂ, ದೇವಜನರಾದ ಇಸ್ರಾಯೇಲರನ್ನೂ ಸೇವಿಸಿರಿ.</verse>
				<verse number="4">ಇದಲ್ಲದೆ ಇಸ್ರಾಯೇಲಿನ ಅರಸನಾದ ದಾವೀದನ ಮತ್ತು ಅವನ ಮಗನಾದ ಸೊಲೊಮೋನನ ಬರಹದ ಪ್ರಕಾರವಾಗಿಯೂ, ನಿಮ್ಮ ಗೋತ್ರ ವರ್ಗಗಳ ಪ್ರಕಾರವಾಗಿಯೂ ಸಿದ್ಧಮಾಡಿಕೊಳ್ಳಿರಿ.</verse>
				<verse number="5">“ಇದರ ಹೊರತಾಗಿ, ಪವಿತ್ರ ಸ್ಥಳಗಳು ಸಾಮಾನ್ಯ ಜನರ ಭಾಗಗಳಿಗೆ ಅನುಗುಣವಾಗಿ ನಿಲ್ಲಬೇಕು, ಲೇವಿಯರು ಕೂಡ ಕುಲಗಳ ಭಾಗಗಳಿಗೆ ಅನುಗುಣವಾಗಿ ನಿಲ್ಲಬೇಕು.</verse>
				<verse number="6">ಪಸ್ಕದ ಕುರಿಮರಿಯನ್ನು ವಧಿಸಿ ನಿಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಹೇಳಿದ ವಾಕ್ಯದ ಪ್ರಕಾರ ನಿಮ್ಮ ಸಹೋದರರು ಮಾಡುವ ಹಾಗೆ ಅವರನ್ನು ಸಿದ್ಧಮಾಡಿರಿ,” ಎಂದನು.</verse>
				<verse number="7">ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಸಾಮಾನ್ಯ ಜನರಿಗೆ ಪಸ್ಕದ ಆಡುಮರಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ, ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನೂ ಕೊಟ್ಟನು. ಇವೆಲ್ಲಾ ಅರಸನ ಸ್ವಂತ ಸೊತ್ತಿನಿಂದಲೇ ಕೊಟ್ಟನು.</verse>
				<verse number="8">ಹಾಗೆಯೇ ಅವನ ಪ್ರಧಾನರು ಜನರಿಗೂ, ಯಾಜಕರಿಗೂ, ಲೇವಿಯರಿಗೂ ಮನಃಪೂರ್ವಕವಾಗಿ ಕೊಟ್ಟರು. ದೇವರ ಆಲಯದ ನಾಯಕರಾದ ಹಿಲ್ಕೀಯನೂ, ಜೆಕರ್ಯನೂ, ಯೆಹೀಯೇಲನೂ ಪಸ್ಕದ ಬಲಿಗೋಸ್ಕರ ಎರಡು ಸಾವಿರದ ಆರುನೂರು ಪಸ್ಕದ ಬಲಿಗಳನ್ನೂ, ಮುನ್ನೂರು ಎತ್ತುಗಳನ್ನೂ ಯಾಜಕರಿಗೆ ಕೊಟ್ಟರು.</verse>
				<verse number="9">ಇದಲ್ಲದೆ ಲೇವಿಯರಲ್ಲಿ ಪ್ರಧಾನರಾದ ಕೋನನ್ಯನೂ, ಅವನ ಸಹೋದರನಾದ ಶೆಮಾಯನೂ, ನೆತನೆಯೇಲನೂ, ಹಷಬ್ಯನೂ, ಯೆಹಿಯೇಲನೂ, ಯೋಜಾಬಾದನೂ ಪಸ್ಕದ ಬಲಿಗಳ ನಿಮಿತ್ತವಾಗಿ ಐದು ಸಾವಿರ ಪಸ್ಕದ ಬಲಿಗಳನ್ನೂ, ಐನೂರು ಎತ್ತುಗಳನ್ನೂ ಲೇವಿಯರಿಗೆ ಕೊಟ್ಟರು.</verse>
				<verse number="10">ಹೀಗೆ ಅರಸನ ಆಜ್ಞೆಯ ಪ್ರಕಾರ ಸೇವೆಯನ್ನು ಸಿದ್ಧಮಾಡಲಾಯಿತು. ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ, ಲೇವಿಯರು ತಮ್ಮ ತಮ್ಮ ಸರತಿಗಳಲ್ಲಿಯೂ ನಿಂತಿದ್ದರು.</verse>
				<verse number="11">ಲೇವಿಯರು ಪಸ್ಕದ ಕುರಿಮರಿಯನ್ನು ವಧಿಸಿದ ತರುವಾಯ, ಯಾಜಕರು ಅವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು. ಆದರೆ ಲೇವಿಯರು ಚರ್ಮವನ್ನು ಸುಲಿದರು,</verse>
				<verse number="12">ಮೋಶೆಯ ಗ್ರಂಥದಲ್ಲಿ ಬರೆದಿರುವಂತೆ, ಜನರ ವಂಶಗಳ ಮನೆಗಳ ಪ್ರಕಾರ, ಯೆಹೋವ ದೇವರಿಗೆ ಅರ್ಪಿಸಲು ಅವರು ಕೊಡುವ ಹಾಗೆ ದಹನಬಲಿಗಳನ್ನು ತೆಗೆದು ಇಟ್ಟರು. ಹಾಗೆಯೇ ಎತ್ತುಗಳನ್ನು ತೆಗೆದಿಟ್ಟರು.</verse>
				<verse number="13">ಹೀಗೆ ಕಟ್ಟಳೆಯ ಪ್ರಕಾರ ಪಸ್ಕದ ಮಾಂಸವನ್ನು ಬೆಂಕಿಯಿಂದ ಸುಟ್ಟರು. ಆದರೆ ಪರಿಶುದ್ಧವಾದವುಗಳನ್ನು ಗಡಿಗೆಗಳಲ್ಲಿಯೂ, ತಪ್ಪಲೆಗಳಲ್ಲಿಯೂ, ಕೊಪ್ಪರಿಗೆಗಳಲ್ಲಿಯೂ ಬೇಯಿಸಿ, ಶೀಘ್ರವಾಗಿ ಜನರೆಲ್ಲರಿಗೆ ಕಳುಹಿಸಿದರು.</verse>
				<verse number="14">ತರುವಾಯ ತಮಗೋಸ್ಕರ, ಯಾಜಕರಿಗೋಸ್ಕರ ಭೋಜನವನ್ನು ಸಿದ್ಧಮಾಡಿದರು. ಏಕೆಂದರೆ ಆರೋನನ ಮಕ್ಕಳಾದ ಯಾಜಕರು ರಾತ್ರಿಯ ಪರ್ಯಂತರ ದಹನಬಲಿಗಳನ್ನೂ, ಕೊಬ್ಬನ್ನೂ ಅರ್ಪಿಸುವುದರಲ್ಲಿದ್ದರು. ಆದ್ದರಿಂದ ಲೇವಿಯರು ತಮಗೋಸ್ಕರವೂ, ಆರೋನನ ಮಕ್ಕಳಾದ ಯಾಜಕರಿಗೋಸ್ಕರವೂ ಭೋಜನವನ್ನು ಸಿದ್ಧಮಾಡಿದರು.</verse>
				<verse number="15">ದಾವೀದನೂ, ಆಸಾಫನೂ, ಹೇಮಾನನೂ, ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು. ದ್ವಾರಪಾಲಕರು ಬಾಗಿಲಲ್ಲಿ ಇದ್ದರು. ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು. ಏಕೆಂದರೆ ಅವರ ಸಹೋದರರಾದ ಲೇವಿಯರಿಗೋಸ್ಕರ ಭೋಜನವನ್ನು ಸಿದ್ಧಮಾಡುತ್ತಿದ್ದರು.</verse>
				<verse number="16">ಹೀಗೆಯೇ ಅರಸನಾದ ಯೋಷೀಯನ ಆಜ್ಞೆಯ ಪ್ರಕಾರ ಪಸ್ಕವನ್ನು ಆಚರಿಸುವುದಕ್ಕೂ, ಯೆಹೋವ ದೇವರ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವುದಕ್ಕೂ, ಅದೇ ಸಮಯದಲ್ಲಿ ಯೆಹೋವ ದೇವರ ಸೇವೆಯು ಸಿದ್ಧವಾಯಿತು.</verse>
				<verse number="17">ಸಿದ್ಧವಾಗಿದ್ದ ಇಸ್ರಾಯೇಲರು ಆ ಕಾಲದಲ್ಲಿ ಪಸ್ಕವನ್ನು ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನೂ ಏಳು ದಿವಸ ಆಚರಿಸಿದರು.</verse>
				<verse number="18">ಪ್ರವಾದಿಯಾದ ಸಮುಯೇಲನ ದಿವಸಗಳು ಮೊದಲುಗೊಂಡು ಇಸ್ರಾಯೇಲಿನಲ್ಲಿ ಇಂಥಾ ಪಸ್ಕವನ್ನು ಆಚರಿಸಿರಲಿಲ್ಲ. ಇಸ್ರಾಯೇಲಿನ ಸಮಸ್ತ ಅರಸರಲ್ಲಿ ಯೋಷೀಯನೂ, ಯಾಜಕರೂ, ಲೇವಿಯರೂ, ಸಿದ್ಧವಾಗಿದ್ದ ಯೆಹೂದ ಹಾಗೂ ಇಸ್ರಾಯೇಲರೆಲ್ಲರೂ, ಯೆರೂಸಲೇಮಿನ ನಿವಾಸಿಗಳೂ ಆಚರಿಸಿದ ಪಸ್ಕದ ಹಾಗೆ ಯಾರೂ ಆಚರಿಸಲಿಲ್ಲ.</verse>
				<verse number="19">ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಈ ಪಸ್ಕಹಬ್ಬವನ್ನು ಆಚರಿಸಲಾಯಿತು.</verse>
				<verse number="20">ಯೋಷೀಯನು ಮಹಾ ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದ ನಂತರ, ಈಜಿಪ್ಟಿನ ಅರಸ ನೆಕೋ ಎಂಬವನು ಯುದ್ಧಮಾಡುವುದಕ್ಕಾಗಿ ಯೂಫ್ರೇಟೀಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಬಂದನು. ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದನು.</verse>
				<verse number="21">ಆದರೆ ಇವನು ಯೋಷೀಯನ ಬಳಿಗೆ ಸೇವಕರನ್ನು ಕಳುಹಿಸಿ, “ಯೆಹೂದದ ಅರಸನೇ, ನನಗೆ ನೀನು ಏನು? ಈ ಹೊತ್ತು ನಿನ್ನ ಮೇಲೆ ಅಲ್ಲ. ನಾನು ಯುದ್ಧಮಾಡುವ ವೈರಿಯ ಮೇಲೆಯೇ ದಾಳಿಮಾಡುತ್ತೇನೆ. ತ್ವರೆಮಾಡು ಎಂದು ದೇವರು ನನಗೆ ಹೇಳಿದ್ದಾರೆ. ನನ್ನ ಸಂಗಡ ಇರುವ ದೇವರು ನಿನ್ನನ್ನು ನಾಶಮಾಡದ ಹಾಗೆ ನೀನು ದೇವರ ಮುಂದೆ ಸುಮ್ಮನಿರು.”</verse>
				<verse number="22">ಆದಾಗ್ಯೂ ಯೋಷೀಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ, ಅವನ ಸಂಗಡ ಯುದ್ಧಮಾಡಲು ತನ್ನ ವೇಷ ಮರೆಸಿಕೊಂಡು ಹೋದನು. ಯೋಷೀಯನು ದೇವರ ಬಾಯಿಂದ ಬಂದ ನೆಕೋ ಎಂಬವನ ಮಾತುಗಳನ್ನು ಕೇಳದೆ ಮೆಗಿದ್ದೋ ತಗ್ಗಿನಲ್ಲಿ ಯುದ್ಧಮಾಡಲು ಬಂದನು.</verse>
				<verse number="23">ಆಗ ಬಿಲ್ಲುಗಾರರು ಅರಸನಾದ ಯೋಷೀಯನ ಮೇಲೆ ಬಾಣವನ್ನು ಎಸೆದರು. ಅರಸನು ತನ್ನ ಸೇವಕರಿಗೆ, “ನನ್ನನ್ನು ಆಚೆಗೆ ಒಯ್ಯಿರಿ, ಏಕೆಂದರೆ ಬಹು ಗಾಯಪಟ್ಟಿದ್ದೇನೆ,” ಎಂದನು.</verse>
				<verse number="24">ಆದ್ದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು, ಅವನಿಗಿದ್ದ ಎರಡನೆಯ ರಥದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಮರಣ ಹೊಂದಲು, ಅವನ ಶವವನ್ನು ಅವನ ಪಿತೃಗಳ ಸ್ಮಶಾನದಲ್ಲಿ ಸಮಾಧಿಮಾಡಿದರು. ಸಮಸ್ತ ಯೆಹೂದ ಮತ್ತು ಯೆರೂಸಲೇಮಿನವರು ಯೋಷೀಯನಿಗೋಸ್ಕರ ದುಃಖಪಟ್ಟರು.</verse>
				<verse number="25">ಯೆರೆಮೀಯನು ಯೋಷೀಯನಿಗೋಸ್ಕರ ದುಃಖ ಗೀತವನ್ನು ಬರೆದನು. ಹಾಡುಗಾರರೂ, ಹಾಡುಗಾರ್ತಿಯರೂ ಯೋಷೀಯನನ್ನು ಇದುವರೆಗೂ ತಮ್ಮ ಗೋಳಾಟ ಪದ್ಯಗಳಲ್ಲಿ ಸ್ಮರಿಸಿಕೊಳ್ಳುತ್ತಾರೆ. ಇದು ಇಸ್ರಾಯೇಲಿನಲ್ಲಿ ಸಂಪ್ರದಾಯವಾಯಿತು ಮತ್ತು ಈ ಗೀತೆಗಳು ಪ್ರಲಾಪಗಳಲ್ಲಿ ಬರೆದಿರುತ್ತವೆ.</verse>
				<verse number="26">ಯೋಷೀಯನ ಮಿಕ್ಕಾದ ಕ್ರಿಯೆಗಳು ಯೆಹೋವ ದೇವರ ನಿಯಮದಲ್ಲಿ ಬರೆದಿರುವ ಪ್ರಕಾರ, ಅವನು ಮಾಡಿದ ಭಕ್ತಿಕಾರ್ಯಗಳೂ,</verse>
				<verse number="27">ಅವನ ಕ್ರಿಯೆಗಳೂ, ಮೊದಲನೆಯವುಗಳೂ, ಕಡೆಯವುಗಳೂ ಇಸ್ರಾಯೇಲ್ ಯೆಹೂದದ ಅರಸರ ಪುಸ್ತಕದಲ್ಲಿ ಬರೆದಿರುತ್ತವೆ.</verse>
			</chapter>
			<chapter number="36">
				<verse number="1">ಆಗ ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನನ್ನು ತೆಗೆದುಕೊಂಡು ಯೆರೂಸಲೇಮಿನಲ್ಲಿ ಅವನ ತಂದೆಗೆ ಬದಲಾಗಿ ಅರಸನನ್ನಾಗಿ ಮಾಡಿದರು.</verse>
				<verse number="2">ಯೆಹೋವಾಹಾಜನು ಅರಸನಾದಾಗ ಇಪ್ಪತ್ತಮೂರು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.</verse>
				<verse number="3">ಈಜಿಪ್ಟ್ ಅರಸನು ಯೆರೂಸಲೇಮಿನಲ್ಲಿ ಅವನನ್ನು ಸಿಂಹಾಸನದಿಂದ ತೆಗೆದುಹಾಕಿ, ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ, ಮೂವತ್ತ ನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.</verse>
				<verse number="4">ಇದಲ್ಲದೆ ಈಜಿಪ್ಟ್ ಅರಸನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಮೇಲೆ ಅರಸನನ್ನಾಗಿ ಮಾಡಿ, ಅವನಿಗೆ ಯೆಹೋಯಾಕೀಮನೆಂಬ ಹೆಸರನ್ನಿಟ್ಟನು. ನೆಕೋವನು ಎಲ್ಯಾಕೀಮನ ಸಹೋದರನಾದ ಯೆಹೋವಾಹಾಜನನ್ನು ತೆಗೆದುಕೊಂಡು ಈಜಿಪ್ಟಿಗೆ ಒಯ್ದನು.</verse>
				<verse number="5">ಯೆಹೋಯಾಕೀಮನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಆದರೆ ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.</verse>
				<verse number="6">ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಬಂದು ಬಾಬಿಲೋನಿಗೆ ಒಯ್ಯುವುದಕ್ಕಾಗಿ ಅವನಿಗೆ ಕಂಚಿನ ಸಂಕೋಲೆಗಳನ್ನು ಹಾಕಿಸಿದನು.</verse>
				<verse number="7">ಇದಲ್ಲದೆ ನೆಬೂಕದ್ನೆಚ್ಚರನು ಯೆಹೋವ ದೇವರ ಆಲಯದ ಪಾತ್ರೆಗಳಲ್ಲಿ ಕೆಲವನ್ನು ಬಾಬಿಲೋನಿಗೆ ತೆಗೆದುಕೊಂಡುಹೋಗಿ, ಬಾಬಿಲೋನಿನಲ್ಲಿರುವ ತನ್ನ ಮಂದಿರದಲ್ಲಿ ಇರಿಸಿದನು.</verse>
				<verse number="8">ಯೆಹೋಯಾಕೀಮನ ಇತರ ಕ್ರಿಯೆಗಳೂ, ಅವನು ಮಾಡಿದ ಅಸಹ್ಯಗಳೂ, ಅವನಲ್ಲಿ ಕಂಡುಕೊಂಡದ್ದೂ, ಇಸ್ರಾಯೇಲ್ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗ ಯೆಹೋಯಾಖೀನನು ಅರಸನಾದನು.</verse>
				<verse number="9">ಯೆಹೋಯಾಖೀನನು ಅರಸನಾದಾಗ ಹದಿನೆಂಟು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.</verse>
				<verse number="10">ಆದರೆ ಒಂದು ವರ್ಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ, ಅವನನ್ನೂ ಮತ್ತು ಯೆಹೋವ ದೇವರ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಬರಮಾಡಿ, ಅವನ ಸಹೋದರನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಮೇಲೆ ಅರಸನನ್ನಾಗಿ ಮಾಡಿದನು.</verse>
				<verse number="11">ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು, ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು.</verse>
				<verse number="12">ಅವನು ತನ್ನ ದೇವರಾದ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ, ಯೆಹೋವ ದೇವರು ಹೇಳಿದ ಮಾತುಗಳಂತೆ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳದೆ ಇದ್ದನು.</verse>
				<verse number="13">ಇದಲ್ಲದೆ ಅವನು ದೇವರ ಮೇಲೆ ಆಣೆ ಇಡುವಂತೆ ಮಾಡಿದ ಅರಸನಾದ ನೆಬೂಕದ್ನೆಚ್ಚರನಿಗೆ ತಿರುಗಿಬಿದ್ದನು. ಹೇಗೆಂದರೆ ಅವನು ಇಸ್ರಾಯೇಲಿನ ಯೆಹೋವ ದೇವರ ಕಡೆಗೆ ತಿರುಗದೆ, ಹಟಮಾರಿಯಾಗಿ ತನ್ನ ಹೃದಯವನ್ನು ಕಠಿಣ ಮಾಡಿಕೊಂಡನು.</verse>
				<verse number="14">ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ, ಜನರೂ ಜನಾಂಗಗಳ ಅಸಹ್ಯಗಳನ್ನು ಹಿಂಬಾಲಿಸಿ ಬಹಳವಾಗಿ ಅಪನಂಬಿಗಸ್ತರಾಗಿ, ಯೆಹೋವ ದೇವರು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.</verse>
				<verse number="15">ಅವರ ಪಿತೃಗಳ ದೇವರಾದ ಯೆಹೋವ ದೇವರು ತಮ್ಮ ಸೇವಕರನ್ನು ಅವನ ಬಳಿಗೆ ಪುನಃ ಕಳುಹಿಸಿದರು. ತಮ್ಮ ಜನರ ಮೇಲೆಯೂ, ತಮ್ಮ ನಿವಾಸ ಸ್ಥಾನದ ಮೇಲೆಯೂ ಅವರು ಕನಿಕರಪಟ್ಟರು.</verse>
				<verse number="16">ಆದರೆ ಯೆಹೋವ ದೇವರ ಕೋಪವು ತಮ್ಮ ಜನರಿಗೆ ವಿರೋಧವಾಗಿ ಏಳುವವರೆಗೂ, ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ, ದೇವರ ವಾಕ್ಯಗಳನ್ನು ತಿರಸ್ಕರಿಸಿ, ದೇವರ ಪ್ರವಾದಿಗಳಿಗೆ ಅಪಹಾಸ್ಯ ಮಾಡಿದರು.</verse>
				<verse number="17">ಆದ್ದರಿಂದ ದೇವರು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದರು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಖಡ್ಗದಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ, ಕನ್ಯಾಸ್ತ್ರೀಯ ಮೇಲಾದರೂ, ಅತಿವೃದ್ಧನ ಮೇಲಾದರೂ ಕನಿಕರಪಡಲಿಲ್ಲ. ದೇವರು ಸಮಸ್ತ ಜನರನ್ನು ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿದರು.</verse>
				<verse number="18">ಇದಲ್ಲದೆ ದೊಡ್ಡವೂ, ಸಣ್ಣವೂ ಆದ ಯೆಹೋವ ದೇವರ ಆಲಯದ ಎಲ್ಲಾ ಸಲಕರಣೆಗಳು ಆಲಯದ ಬೊಕ್ಕಸಗಳು, ಅರಸನ ಬೊಕ್ಕಸಗಳು, ಅವನ ಪ್ರಧಾನರ ಬೊಕ್ಕಸಗಳು ಇವುಗಳನ್ನೆಲ್ಲಾ ಬಾಬಿಲೋನಿಗೆ ತರಿಸಿದನು.</verse>
				<verse number="19">ಅವರು ದೇವರ ಆಲಯವನ್ನು ಸುಟ್ಟುಬಿಟ್ಟು, ಯೆರೂಸಲೇಮಿನ ಗೋಡೆಯನ್ನು ಕೆಡವಿಹಾಕಿ, ಅದರ ಅರಮನೆಗಳನ್ನು ಸುಟ್ಟುಬಿಟ್ಟು, ಅದರ ಬೆಲೆಯುಳ್ಳ ಸಲಕರಣೆಗಳನ್ನೆಲ್ಲಾ ನಾಶಮಾಡಿದರು.</verse>
				<verse number="20">ಇದಲ್ಲದೆ ಖಡ್ಗದಿಂದ ತಪ್ಪಿಸಿಕೊಂಡವರನ್ನು ಅವನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು. ಅವರು ಅಲ್ಲಿ ಪಾರಸಿಯ ಸಾಮ್ರಾಜ್ಯ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.</verse>
				<verse number="21">ಹೀಗೆ ಯೆರೆಮೀಯನ ಮುಖಾಂತರವಾಗಿ ಹೇಳಿಸಿದ ಯೆಹೋವ ದೇವರ ವಾಕ್ಯವು ನೆರವೇರಿತು. ದೇಶವು ಅದರ ಸಬ್ಬತ್ ದಿನಗಳನ್ನು ಅನುಭವಿಸುವುದಕ್ಕೆ ಮಾರ್ಗವಾಯಿತು. ಅದು ಎಪ್ಪತ್ತು ವರ್ಷ ಹಾಳುಬಿದ್ದು, ಆ ಕಾಲಾವಧಿಯಲ್ಲಿ ವಿಶ್ರಾಂತಿಯನ್ನು ಅನುಭವಿಸುತ್ತಾ ಇತ್ತು.</verse>
				<verse number="22">ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ,</verse>
				<verse number="23">“ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ. ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಸ್ವಂತನಾಡಿಗೆ ಹೋಗಬಹುದು. ದೇವರಾದ ಯೆಹೋವ ದೇವರು ಅವರ ಸಂಗಡ ಇರಲಿ!’ ” ಎಂದನು.</verse>
			</chapter>
		</book>
		<book number="15">
			<chapter number="1">
				<verse number="1">ಆದರೆ ಪಾರಸಿಯ ಅರಸ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವ ದೇವರು ಯೆರೆಮೀಯನ ಮುಂಖಾತರ ಹೇಳಿದ ವಾಕ್ಯವು ಈಡೇರುವ ಹಾಗೆ ಯೆಹೋವ ದೇವರು ಪಾರಸಿಯ ಅರಸ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ, ಅವನು ತನ್ನ ಸಮಸ್ತ ರಾಜ್ಯದಲ್ಲಿ ಡಂಗುರದಿಂದಲೂ, ಪತ್ರಗಳಿಂದಲೂ ಸಾರಿ ಹೇಳಿದ್ದೇನೆಂದರೆ:</verse>
				<verse number="2">“ಪಾರಸಿಯ ಅರಸ ಕೋರೆಷನು ಹೀಗೆ ಹೇಳುತ್ತಾನೆ: “ ‘ಪರಲೋಕದ ದೇವರಾದ ಯೆಹೋವ ದೇವರು ಭೂಲೋಕದ ರಾಜ್ಯಗಳನ್ನೆಲ್ಲಾ ನನಗೆ ಕೊಟ್ಟಿದ್ದಾರೆ ಮತ್ತು ಅವರು ಯೆಹೂದ ದೇಶದ ಯೆರೂಸಲೇಮಿನಲ್ಲಿ ತಮಗೆ ಆಲಯವನ್ನು ಕಟ್ಟಿಸಲು ನನಗೆ ಆಜ್ಞಾಪಿಸಿದ್ದಾರೆ.</verse>
				<verse number="3">ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಯೆಹೂದ, ಯೆರೂಸಲೇಮಿಗೆ ಹೋಗಿ, ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಒಂದು ದೇವಾಲಯವನ್ನು ಕಟ್ಟಲಿ, ಅವರ ಸಂಗಡ ಅವರ ದೇವರು ಇರಲಿ!</verse>
				<verse number="4">ಯೆಹೂದ್ಯರಲ್ಲಿ ಬದುಕುಳಿದವರು ಈಗ ವಾಸಿಸುತ್ತಿರುವ ಯಾವುದೇ ಪ್ರದೇಶದಲ್ಲಿ, ಜನರು ಅವರಿಗೆ ಬೆಳ್ಳಿ ಮತ್ತು ಬಂಗಾರ, ಸರಕುಗಳು ಮತ್ತು ಪ್ರಾಣಿಪಶುಗಳನ್ನು ಮತ್ತು ಯೆರೂಸಲೇಮಿನ ದೇವಾಲಯಕ್ಕೆ ಉಚಿತ ಕಾಣಿಕೆಗಳನ್ನು ಒದಗಿಸಬೇಕು.’ ”</verse>
				<verse number="5">ಆಗ ಯೆಹೂದ ಹಾಗೂ ಬೆನ್ಯಾಮೀನ್ ಕುಟುಂಬಗಳ ಮುಖ್ಯಸ್ಥರೂ, ಯಾಜಕರೂ, ಲೇವಿಯರೂ, ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯವನ್ನು ಕಟ್ಟುವುದಕ್ಕೆ ಹೋಗಲು ಯೆಹೋವ ದೇವರಿಂದ ಪ್ರೇರಿತರಾದವರೆಲ್ಲರೂ ಎದ್ದರು.</verse>
				<verse number="6">ಅವರ ನೆರೆಯವರೆಲ್ಲರು ಎಲ್ಲಾ ಕಾಣಿಕೆಗಳಲ್ಲದೇ, ಬೆಳ್ಳಿ ಹಾಗೂ ಬಂಗಾರದಿಂದ ಮಾಡಿದ ವಸ್ತುಗಳಿಂದಲೂ, ಪಶುಗಳಿಂದಲೂ, ಬೆಲೆಯುಳ್ಳವುಗಳಿಂದಲೂ ಅವರಿಗೆ ಧಾರಾಳವಾಗಿ ಸಹಾಯ ಮಾಡಿದರು.</verse>
				<verse number="7">ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು, ತನ್ನ ದೇವರುಗಳ ಮಂದಿರಗಳಲ್ಲಿ ಇರಿಸಿದ್ದ ಯೆಹೋವ ದೇವರ ಆಲಯದ ಸಲಕರಣೆಗಳನ್ನು ಪಾರಸಿಯ ಅರಸನಾದ ಕೋರೆಷನು ತರಿಸಿದನು.</verse>
				<verse number="8">ಅವುಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸದವನಾದ ಮಿತ್ರದಾತನ ಕೈಯಿಂದ ತರಿಸಿ, ಯೆಹೂದದ ರಾಜಕುಮಾರನಾದ ಶೆಷ್ಬಚ್ಚರನಿಗೆ ಎಣಿಸಿಕೊಟ್ಟನು.</verse>
				<verse number="9">ಅವುಗಳ ಲೆಕ್ಕವು ಹೀಗಿವೆ: ಬಂಗಾರದ 30 ತಟ್ಟೆಗಳು. ಬೆಳ್ಳಿಯ 1,000 ತಟ್ಟೆಗಳು. ಬೆಳ್ಳಿಯ 29 ಪಾತ್ರೆಗಳು.</verse>
				<verse number="10">ಬಂಗಾರದ 30 ಬಟ್ಟಲುಗಳು. ಬೆಳ್ಳಿಯ 410 ಬಟ್ಟಲುಗಳು. ಇನ್ನಿತರು 1,000 ವಸ್ತುಗಳು.</verse>
				<verse number="11">ಒಟ್ಟು 5,400 ಬೆಳ್ಳಿಬಂಗಾರದಿಂದ ಮಾಡಿದ ವಸ್ತುಗಳು. ಇವುಗಳನ್ನೆಲ್ಲಾ ಬಾಬಿಲೋನಿನಿಂದ ಯೆರೂಸಲೇಮಿಗೆ ಪ್ರಯಾಣಮಾಡಿದವರ ಸಂಗಡ ಶೆಷ್ಬಚ್ಚರನು ತೆಗೆದುಕೊಂಡು ಹೋದನು.</verse>
			</chapter>
			<chapter number="2">
				<verse number="1">ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ, ಬಾಬಿಲೋನಿಗೆ ಸೆರೆಯಾಗಿ ಹೋಗಿ, ಅನಂತರ ಬಂಧನದಿಂದ ಬಿಡುಗಡೆಯಾಗಿ ಯೆರೂಸಲೇಮಿಗೂ, ಯೆಹೂದಕ್ಕೂ, ತಮ್ಮ ತಮ್ಮ ಪಟ್ಟಣಗಳಿಗೂ</verse>
				<verse number="2">ಜೆರುಬ್ಬಾಬೆಲನ ಸಂಗಡ ಹಿಂದಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಸೆರಾಯ, ರೆಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್ ಹಾಗೂ ಬಾಣ. ಇಸ್ರಾಯೇಲ್ ಜನಾಂಗದ ಪುರುಷರ ಸಂಖ್ಯೆ:</verse>
				<verse number="3">ಪರೋಷನ ವಂಶಜರು 2,172</verse>
				<verse number="4">ಶೆಫಟ್ಯನ ವಂಶಜರು 372</verse>
				<verse number="5">ಆರಹನ ವಂಶಜರು 775</verse>
				<verse number="6">ಯೇಷೂವ, ಯೋವಾಬ್ ಎಂಬವರ ಮಕ್ಕಳಲ್ಲಿ ಪಹತ್ ಮೋವಾಬನ ವಂಶಜರು 2,812</verse>
				<verse number="7">ಏಲಾಮನ ವಂಶಜರು 1,254</verse>
				<verse number="8">ಜತ್ತೂವಿನ ವಂಶಜರು 945</verse>
				<verse number="9">ಜಕ್ಕೈನ ವಂಶಜರು 760</verse>
				<verse number="10">ಬಾನೀಯ ವಂಶಜರು 642</verse>
				<verse number="11">ಬೇಬೈನ ವಂಶಜರು 623</verse>
				<verse number="12">ಅಜ್ಗಾದನ ವಂಶಜರು 1,222</verse>
				<verse number="13">ಅದೋನೀಕಾಮಿನ ವಂಶಜರು 666</verse>
				<verse number="14">ಬಿಗ್ವೈ ವಂಶಜರು 2,056</verse>
				<verse number="15">ಅದೀನನ ವಂಶಜರು 454</verse>
				<verse number="16">ಹಿಜ್ಕೀಯನ ಮಗನಾದ ಆಟೇರ್ ವಂಶಜರು 98</verse>
				<verse number="17">ಬೇಚೈಯ ವಂಶಜರು 323</verse>
				<verse number="18">ಯೋರನ ವಂಶಜರು 112</verse>
				<verse number="19">ಹಾಷುಮನ ವಂಶಜರು 223</verse>
				<verse number="20">ಗಿಬ್ಬಾರನ ವಂಶಜರು 95</verse>
				<verse number="21">ಬೇತ್ಲೆಹೇಮನ ವಂಶಜರು 123</verse>
				<verse number="22">ನೆಟೋಫದ ಜನರು 56</verse>
				<verse number="23">ಅನಾತೋತ್ ಊರಿನವರು 128</verse>
				<verse number="24">ಅಜ್ಮಾವೆತಿನವರು 42</verse>
				<verse number="25">ಕಿರ್ಯತ್ ಯಾರೀಮ್, ಕೆಫೀರಾ, ಬೇರೋತ್ ಎಂಬ ಪಟ್ಟಣದವರು 743</verse>
				<verse number="26">ರಾಮಾ ಗೆಬ ಎಂಬ ಪಟ್ಟಣದವರು 621</verse>
				<verse number="27">ಮಿಕ್ಮಾಷದ ಜನರು 122</verse>
				<verse number="28">ಬೇತೇಲ್ ಮತ್ತು ಆಯಿ ಎಂಬ ಪಟ್ಟಣದವರು 223</verse>
				<verse number="29">ನೆಬೋ ಊರಿನವರು 52</verse>
				<verse number="30">ಮಗ್ಬೀಷನ ಜನರು 156</verse>
				<verse number="31">ಮತ್ತೊಬ್ಬ ಏಲಾಮನ ವಂಶಜರು 1,254</verse>
				<verse number="32">ಹಾರಿಮನ ವಂಶಜರು 320</verse>
				<verse number="33">ಲೋದ್, ಹಾದೀದ್, ಓನೋ ಎಂಬ ಊರಿನ ಜನರು 725</verse>
				<verse number="34">ಯೆರಿಕೋವಿನ ವಂಶಜರು 345</verse>
				<verse number="35">ಸೆನಾಹನ ವಂಶಜರು 3,630.</verse>
				<verse number="36">ಯಾಜಕರು: ಯೇಷೂವನ ಕುಟುಂಬದವರಾದ ಯೆದಾಯನ ವಂಶಜರು 973</verse>
				<verse number="37">ಇಮ್ಮೇರನ ವಂಶಜರು 1,052</verse>
				<verse number="38">ಪಷ್ಹೂರನ ವಂಶಜರು 1,247</verse>
				<verse number="39">ಹಾರಿಮನ ವಂಶಜರು 1,017.</verse>
				<verse number="40">ಲೇವಿಯರು: ಹೋದವ್ಯನ ಸಂತತಿಯಾದ ಯೇಷೂವನ, ಕದ್ಮಿಯೇಲನ ವಂಶಜರು 74.</verse>
				<verse number="41">ಹಾಡುಗಾರರು: ಆಸಾಫನ ವಂಶಜರು 128.</verse>
				<verse number="42">ದೇವಾಲಯದ ದ್ವಾರಪಾಲಕರಾದ ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ, ಶೋಬೈ ಮುಂತಾದವರ ಮಕ್ಕಳು ಒಟ್ಟು 139.</verse>
				<verse number="43">ದೇವಾಲಯದ ಸೇವಕರು: ಜೀಹ, ಹಸೂಫ, ಟಬ್ಬಾವೋತ್ ಇವರ ವಂಶಜರು.</verse>
				<verse number="44">ಕೆರೋಸ್, ಸೀಯಹಾ, ಪದೋನ್,</verse>
				<verse number="45">ಲೆಬಾನ, ಹಗಾಬ, ಅಕ್ಕೂಬ್</verse>
				<verse number="46">ಹಗಾಬ್, ಶಲ್ಮೈ, ಹಾನಾನ್,</verse>
				<verse number="47">ಗಿದ್ದೇಲ್, ಗಹರ್, ರೆವಾಯ,</verse>
				<verse number="48">ರೆಚೀನ್, ನೆಕೋದ, ಗಜ್ಜಾಮ್,</verse>
				<verse number="49">ಉಜ್ಜ, ಪಾಸೇಹ, ಬೇಸೈ,</verse>
				<verse number="50">ಅಸ್ನ, ಮೆಯನೀಮ್, ನೆಫೀಸೀಮ್,</verse>
				<verse number="51">ಬಕ್ಬೂಕ್, ಹಕ್ಕೂಫ, ಹರ್ಹೂರ್,</verse>
				<verse number="52">ಬಚ್ಲೂತ್, ಮೆಹೀದ, ಹರ್ಷ,</verse>
				<verse number="53">ಬರ್ಕೋಸ್, ಸೀಸೆರ, ತೆಮಹ,</verse>
				<verse number="54">ನೆಚೀಹ, ಹಟೀಫ, ಇವರ ವಂಶಜರು.</verse>
				<verse number="55">ಸೊಲೊಮೋನನ ಸೇವಕರ ವಂಶಜರು: ಸೋಟೈ, ಹಸ್ಸೋಫೆರೆತ್, ಪೆರೂದ,</verse>
				<verse number="56">ಯಾಲ, ದರ್ಕೋನ್, ಗಿದ್ದೇಲ್,</verse>
				<verse number="57">ಶೆಫಟ್ಯ, ಹಟ್ಟೀಲ್, ಪೋಕೆರೆತ್ ಹಚ್ಚೆಬಾಯೀಮ್, ಮತ್ತು ಆಮೀ ಇವರ ವಂಶಜರು.</verse>
				<verse number="58">ದೇವಾಲಯದ ಸೇವಕರ ಹಾಗೂ ಸೊಲೊಮೋನನ ಸೇವಕರ ವಂಶಜರು ಒಟ್ಟು 392 ಮಂದಿ.</verse>
				<verse number="59">ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್, ಇಮ್ಮೇರ್ ಎಂಬ ಊರುಗಳಿಂದ ಹೊರಟುಬಂದವರಾಗಿದ್ದು, ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ, ತಾವು ಇಸ್ರಾಯೇಲರೆಂಬುದನ್ನು ರುಜುಪಡಿಸಲಾಗದೇ ಇದ್ದವರು ಯಾರೆಂದರೆ:</verse>
				<verse number="60">ದೆಲಾಯ, ಟೋಬೀಯ, ನೆಕೋದ ಇವರ ಸಂತಾನದವರು ಒಟ್ಟು 652 ಮಂದಿ.</verse>
				<verse number="61">ಯಾಜಕರಲ್ಲಿ: ಹಬಯ್ಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು. ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಪುತ್ರಿಯರಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡ ಕಾರಣ, ಅವನ ಹೆಸರನ್ನು ಇಟ್ಟುಕೊಂಡಿದ್ದನು.</verse>
				<verse number="62">ಇವರು ತಮ್ಮ ವಂಶಾವಳಿಯ ದಾಖಲಾತಿಗಳಲ್ಲಿ ತಮ್ಮ ಹೆಸರುಗಳನ್ನು ಹುಡುಕಿದರು, ಆದರೆ ಅವು ಸಿಕ್ಕದೆ ಹೋದದ್ದರಿಂದ ಅವರು ಅಶುದ್ಧರೆಂದು ಪರಿಗಣಿಸಿ ಯಾಜಕ ಉದ್ಯೋಗದಿಂದ ಬಹಿಷ್ಕಾರವಾದರು.</verse>
				<verse number="63">ಆದ್ದರಿಂದ ಊರೀಮ್, ತುಮ್ಮೀಮ್ ಮುಖಾಂತರ ದೈವನಿರ್ಣಯವನ್ನು ತಿಳಿಸಬಲ್ಲ ಯಾಜಕನು ದೊರೆಯುವ ತನಕ, ಇವರು ಮಹಾಪರಿಶುದ್ಧವಾದ ಪದಾರ್ಥಗಳನ್ನು ತಿನ್ನಬಾರದೆಂದು ರಾಜ್ಯಪಾಲನು ಆದೇಶಿಸಿದನು.</verse>
				<verse number="64">ಹೀಗೆ ಹಿಂದಿರುಗಿ ಬಂದು, ಸಭೆ ಸೇರಿದ ಸರ್ವಸಮೂಹದ ಒಟ್ಟು ಸಂಖ್ಯೆ 42,360.</verse>
				<verse number="65">ಅವರ ಹೊರತಾಗಿ ಅವರ ದಾಸರೂ, ದಾಸಿಯರೂ 7,337 ಮಂದಿಯೂ, ಅವರ ಹಾಡುಗಾರರೂ, ಹಾಡುಗಾರ್ತಿಯರೂ 200 ಮಂದಿ ಇದ್ದರು.</verse>
				<verse number="66">ಅವರ 736 ಕುದುರೆಗಳು, ಅವರ 245 ಹೇಸರಕತ್ತೆಗಳು,</verse>
				<verse number="67">ಅವರ 435 ಒಂಟೆಗಳು, ಅವರ ಒಟ್ಟು 6,720 ಕತ್ತೆಗಳು.</verse>
				<verse number="68">ಅವರು ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಬಂದ ತರುವಾಯ, ಕುಟುಂಬಗಳ ಕೆಲವು ಮುಖ್ಯಸ್ಥರು ದೇವರ ಆಲಯವನ್ನು ಅದರ ಸ್ಥಳದಲ್ಲಿ ಕಟ್ಟುವುದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು.</verse>
				<verse number="69">ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸಕ್ಕಾಗಿ ಬೊಕ್ಕಸಕ್ಕೆ 400 ಕಿಲೋಗ್ರಾಂ ಬಂಗಾರವನ್ನೂ, 2,800 ಕಿಲೋಗ್ರಾಂ ಬೆಳ್ಳಿಯನ್ನೂ, ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು.</verse>
				<verse number="70">ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ದೇವಾಲಯದ ಸೇವಕರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಉಳಿದ ಇಸ್ರಾಯೇಲರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು.</verse>
			</chapter>
			<chapter number="3">
				<verse number="1">ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲರು, ಏಳನೆಯ ತಿಂಗಳಿನಲ್ಲಿ ಏಕಮನಸ್ಸಿನಿಂದ ಯೆರೂಸಲೇಮಿಗೆ ಕೂಡಿಬಂದರು.</verse>
				<verse number="2">ಆಗ ಯೋಚಾದಾಕನ ಮಗನಾದ ಯೇಷೂವನೂ, ಅವನ ಜೊತೆ ಯಾಜಕರೂ, ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಅವನ ಸಹಾಯಕರು ಎದ್ದು ದೇವರ ಮನುಷ್ಯನಾದ ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ದಹನಬಲಿಗಳನ್ನು ಅರ್ಪಿಸುವುದಕ್ಕೆ ಇಸ್ರಾಯೇಲ್ ದೇವರ ಬಲಿಪೀಠವನ್ನು ಕಟ್ಟಿಸಿದರು.</verse>
				<verse number="3">ಸುತ್ತಮುತ್ತಲಿನ ಜನರ ಭಯವಿದ್ದರೂ, ಅವರು ಬಲಿಪೀಠವನ್ನು ಅದರ ಅಸ್ತಿವಾರದ ಮೇಲೆ ಕಟ್ಟಿದರು. ಅದರ ಮೇಲೆ ಯೆಹೋವ ದೇವರಿಗೆ ದಹನಬಲಿಗಳನ್ನು ಉದಯದಲ್ಲಿಯೂ, ಸಾಯಂಕಾಲದಲ್ಲಿಯೂ ಅರ್ಪಿಸಿದರು.</verse>
				<verse number="4">ಇದಲ್ಲದೆ ದೇವರ ನಿಯಮದಲ್ಲಿ ಬರೆದಿರುವಂತೆ ಅವರು ಗುಡಾರಗಳ ಹಬ್ಬವನ್ನು ಆಚರಿಸಿ ಪ್ರತಿದಿನದ ಕಾರ್ಯಕ್ಕೆ ತಕ್ಕ ನೇಮಕದ ಹಾಗೆ ಲೆಕ್ಕದಿಂದ ಪ್ರತಿದಿನದ ದಹನಬಲಿಗಳನ್ನು ಅರ್ಪಿಸಿದರು.</verse>
				<verse number="5">ಅದರ ತರುವಾಯ ಅವರು ನಿತ್ಯ ದಹನಬಲಿ, ಅಮಾವಾಸ್ಯೆ ಬಲಿ, ಯೆಹೋವ ದೇವರ ಎಲ್ಲಾ ಪರಿಶುದ್ಧ ಹಬ್ಬಗಳಲ್ಲಿಯೂ ಜನರು ಅರ್ಪಿಸುವ ಸ್ವಂತ ಇಚ್ಛೆಯಿಂದ ತಂದ ಬಲಿದಾನಗಳ ಬಲಿಯನ್ನೂ ಸಮರ್ಪಿಸಿದರು.</verse>
				<verse number="6">ಏಳನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಲು ಪ್ರಾರಂಭಿಸಿದರು. ಆದರೆ ಯೆಹೋವ ದೇವರ ಮಂದಿರದ ಅಸ್ತಿವಾರವನ್ನು ಇನ್ನೂ ಹಾಕಿರಲಿಲ್ಲ.</verse>
				<verse number="7">ಅವರು ಕಲ್ಲುಕುಟಿಕರಿಗೂ, ಬಡಗಿಯವರಿಗೂ, ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ, ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತೆಗೆದುಕೊಂಡು ಬರಲು ಸೀದೋನ್ಯರಿಗೂ, ಟೈರಿನವರಿಗೂ ಅನ್ನಪಾನಗಳನ್ನೂ, ಎಣ್ಣೆಯನ್ನೂ ಕೊಟ್ಟರು.</verse>
				<verse number="8">ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೆಯ ವರ್ಷದ, ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ, ಉಳಿದ ಅವರ ಸಹೋದರರಾದ ಯಾಜಕರೂ, ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ, ಕೆಲಸವನ್ನು ಪ್ರಾರಂಭಿಸಿ ಇಪ್ಪತ್ತು ವರ್ಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಯೆಹೋವ ದೇವರ ಆಲಯದ ಕೆಲಸ ಮಾಡುವವರ ಮೇಲೆ ಮೇಲ್ವಿಚಾರಕರನ್ನಾಗಿ ನೇಮಿಸಿದರು.</verse>
				<verse number="9">ಯೇಷೂವನೂ, ಅವನ ಮಕ್ಕಳೂ, ಅವನ ಸಹೋದರರೂ, ಕದ್ಮಿಯೇಲ್ ಮತ್ತು ಅವನ ಮಕ್ಕಳೂ, ಇವರು ಹೋದವ್ಯನ ವಂಶಜರು. ಹೇನಾದಾದನ ಮಕ್ಕಳೂ, ಅವರ ಮಕ್ಕಳೂ, ಅವರ ಸಹೋದರರೂ, ಲೇವಿಯರೂ ಆಗ ದೇವರ ಆಲಯದಲ್ಲಿ ಕೆಲಸ ಮಾಡುವವರ ಮೇಲ್ವಿಚಾರಣೆ ಮಾಡಲು ನಿಂತರು.</verse>
				<verse number="10">ಕಟ್ಟುವವರು ಯೆಹೋವ ದೇವರ ಮಂದಿರಕ್ಕೆ ಅಸ್ತಿವಾರ ಹಾಕಿದಾಗ ಇಸ್ರಾಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಯೆಹೋವ ದೇವರನ್ನು ಸ್ತುತಿಸುವುದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವರಾಗಿ ತುತೂರಿಗಳನ್ನೂದುವ ಯಾಜಕರನ್ನೂ, ತಾಳಗಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಸಿದ್ಧಪಡಿಸಿದರು.</verse>
				<verse number="11">ಪರಸ್ಪರವಾಗಿ ಹಾಡುತ್ತಾ, ಕೃತಜ್ಞತಾಸ್ತುತಿ ಮಾಡುತ್ತಾ ಯೆಹೋವ ದೇವರನ್ನು ಕೀರ್ತಿಸಿದರು: “ಯೆಹೋವ ದೇವರು ಒಳ್ಳೆಯವರು! ಅವರ ಅಚಲ ಪ್ರೀತಿ ಇಸ್ರಾಯೇಲರ ಮೇಲೆ ಶಾಶ್ವತ!” ಈ ಸ್ತುತಿ ಕೀರ್ತನೆ ಕೇಳಿಸಿದ ಕೂಡಲೆ, ಯೆಹೋವ ದೇವರ ಆಲಯಕ್ಕೆ ಅಸ್ತಿವಾರ ಹಾಕಲಾಯಿತೆಂದು ಜನರೆಲ್ಲರು ಉತ್ಸಾಹಧ್ವನಿಯಿಂದ ಆರ್ಭಟಿಸಿದರು.</verse>
				<verse number="12">ಮೊದಲಿನ ಮಂದಿರವನ್ನು ಕಂಡಿದ್ದ ವೃದ್ಧರಾದ ಯಾಜಕರೂ ಲೇವಿಯ ಅನೇಕ ಕುಟುಂಬಗಳ ಪ್ರಮುಖರೂ ಅನೇಕರು ಈ ಮಂದಿರದ ಅಸ್ತಿವಾರವನ್ನು ತಮ್ಮ ಮುಂದೆ ಹಾಕುತ್ತಿರುವಾಗ ದೊಡ್ಡ ಶಬ್ದದಿಂದ ಅತ್ತರು.</verse>
				<verse number="13">ಜನರು ಹೀಗೆ ಮಹಾಧ್ವನಿಯಿಂದ ಆರ್ಭಟಿಸುತ್ತಾ ಇದ್ದುದರಿಂದ, ಹರ್ಷಧ್ವನಿ ಯಾವುದು, ಅಳುವವರ ಧ್ವನಿ ಯಾವುದು ಎಂದು ಗುರುತಿಸಲಾಗಲಿಲ್ಲ. ಗದ್ದಲವು ಬಹು ದೂರದವರೆಗೂ ಕೇಳಿಸುತ್ತಿತ್ತು.</verse>
			</chapter>
			<chapter number="4">
				<verse number="1">ಸೆರೆಯಿಂದ ಬಂದವರು ಇಸ್ರಾಯೇಲ್ ದೇವರಾದ ಯೆಹೋವ ದೇವರಿಗಾಗಿ ಆಲಯವನ್ನು ಕಟ್ಟುತ್ತಾರೆಂಬುದಾಗಿ ಯೆಹೂದದ ಮತ್ತು ಬೆನ್ಯಾಮೀನನ ಶತ್ರುಗಳು ಕೇಳಿದಾಗ</verse>
				<verse number="2">ಅವರು ಜೆರುಬ್ಬಾಬೆಲನ ಬಳಿಗೂ, ಕುಟುಂಬಗಳ ಮುಖ್ಯಸ್ಥರ ಬಳಿಗೂ ಬಂದು ಅವರಿಗೆ, “ನಾವು ನಿಮ್ಮ ಹಾಗೆ ನಿಮ್ಮ ದೇವರನ್ನು ಹುಡುಕುತ್ತೇವೆ. ನಮ್ಮನ್ನು ಇಲ್ಲಿಗೆ ಬರಮಾಡಿದ ಅಸ್ಸೀರಿಯದ ಅರಸನಾದ ಏಸರ್‌ಹದ್ದೋನ್ ಎಂಬವನ ದಿವಸಗಳು ಮೊದಲುಗೊಂಡು, ಅವರಿಗೆ ನಾವೂ ಬಲಿಯನ್ನು ಅರ್ಪಿಸುತ್ತಾ ಇದ್ದೇವೆ, ಕಟ್ಟುವುದರಲ್ಲಿ ನಾವು ಸಹಾಯ ಮಾಡುತ್ತೇವೆ,” ಎಂದರು.</verse>
				<verse number="3">ಆದರೆ ಜೆರುಬ್ಬಾಬೆಲನೂ, ಯೇಷೂವನೂ, ಮಿಕ್ಕಾದ ಇಸ್ರಾಯೇಲಿನ ಕುಟುಂಬಗಳ ಮುಖ್ಯಸ್ಥರೂ ಅವರಿಗೆ, “ನಮ್ಮ ದೇವರಿಗೆ ಆಲಯವನ್ನು ಕಟ್ಟುವುದರಲ್ಲಿ ನಿಮಗೆ ಭಾಗವಿಲ್ಲ. ಪಾರಸಿಯ ಅರಸನಾದ ಕೋರೆಷನು ನಮಗೆ ಆಜ್ಞಾಪಿಸಿದ ಹಾಗೆ, ನಾವು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರಿಗೆ ಅದನ್ನು ಕಟ್ಟುವೆವು,” ಎಂದರು.</verse>
				<verse number="4">ಆಗ ಸುತ್ತಲಿದ್ದ ಜನಾಂಗಗಳವರು ಯೆಹೂದದ ಜನರನ್ನು ನಿರಾಶರನ್ನಾಗಿ ಮಾಡಲು ಮತ್ತು ಕಟ್ಟುವುದನ್ನು ಮುಂದುವರಿಸುವ ವಿಷಯದಲ್ಲಿ ಭಯಪಡಿಸಲು ಮುಂದಿದ್ದರು.</verse>
				<verse number="5">ಪಾರಸಿಯ ಅರಸನಾದ ಕೋರೆಷನ ದಿನಗಳಿಂದ ಹಿಡಿದು, ಪಾರಸಿಯ ಅರಸನಾದ ದಾರ್ಯಾವೆಷನ ಆಳ್ವಿಕೆಯವರೆಗೂ, ಅವರ ಯೋಚನೆಯನ್ನು ವ್ಯರ್ಥಮಾಡುವುದಕ್ಕೆ ಅವರ ವಿರೋಧವಾಗಿ ವಕೀಲರನ್ನು ಹಣಕೊಟ್ಟು ಇಟ್ಟುಕೊಂಡರು.</verse>
				<verse number="6">ಆದರೆ ಅಹಷ್ವೇರೋಷನು ಆಳುವಾಗ, ಅವನ ಆಳ್ವಿಕೆಯ ಪ್ರಾರಂಭದಲ್ಲಿ, ಅವರು ಯೆಹೂದ ಮತ್ತು ಯೆರೂಸಲೇಮಿನ ನಿವಾಸಿಗಳಿಗೆ ವಿರೋಧವಾಗಿ ದೂರು ಸಲ್ಲಿಸಿದರು.</verse>
				<verse number="7">ಅರ್ತಷಸ್ತನ ದಿವಸಗಳಲ್ಲಿ ಬಿಷ್ಲಾಮನೂ, ಮಿತ್ರದಾತನೂ, ಟಾಬೆಯೇಲನೂ, ಮಿಕ್ಕಾದ ಅವರ ಜೊತೆಗಾರರೂ ಪಾರಸಿಯ ಅರಸನಾದ ಅರ್ತಷಸ್ತನಿಗೆ ಒಂದು ಪತ್ರ ಬರೆದರು. ಬರೆದ ಆ ಪತ್ರವು ಅರಾಮ್ಯ ಭಾಷೆಯಲ್ಲಿಯೂ, ಅರಾಮ್ಯ ಲಿಪಿಯಲ್ಲಿಯೂ ಇತ್ತು.</verse>
				<verse number="8">ದೇಶಾಧಿಪತಿಯಾದ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ, ಯೆರೂಸಲೇಮಿಗೆ ವಿರೋಧವಾಗಿ ಈ ಕೆಳಗೆ ಕಂಡಂತೆ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದ್ದರು.</verse>
				<verse number="9">ದೇಶಾಧಿಪತಿಯಾದ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ, ಪರ್ಷಿಯಾ, ಯೆರೆಕ್ ಹಾಗೂ ಬಾಬೆಲಿನವರು, ಶೂಷನಿನವರ ಮತ್ತು ಏಲಾಮ್ಯರ ನ್ಯಾಯಾಧೀಶರು, ಅಧಿಕಾರಿಗಳು ಮತ್ತು ಆಡಳಿತಗಾರರು,</verse>
				<verse number="10">ಮತ್ತು ಮಹಾ ಶ್ರೀಮತ್ ಆಸೆನಪ್ಪರನು ಕರೆದುತಂದು ಸಮಾರ್ಯ ಪಟ್ಟಣದಲ್ಲಿ ಮತ್ತು ಯೂಫ್ರೇಟೀಸ್ ನದಿಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು, ಬರೆಯುವುದು ಏನೆಂದರೆ:</verse>
				<verse number="11">ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಈ ರೀತಿಯಿತ್ತು: ಅರ್ತಷಸ್ತ ರಾಜರಿಗೆ, ತಮ್ಮ ಸೇವಕರಾದ ಯೂಫ್ರೇಟೀಸ್ ನದಿಯ ಈಚೆಯವರು:</verse>
				<verse number="12">ಅದಾಗಿ, ತಮ್ಮ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು, ಯೆರೂಸಲೇಮನ್ನು ಸೇರಿ, ರಾಜಕಂಟಕವಾದ ಆ ದುಷ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಮತ್ತೆ ಕಟ್ಟುವುದಕ್ಕೆ ಪ್ರಾರಂಭಿಸಿ, ಪೌಳಿಗೋಡೆಯ ಅಸ್ತಿವಾರವನ್ನು ಮುಗಿಸಿದ್ದಾರೆ ಎಂಬುದಾಗಿ ನಾವು ರಾಜರಿಗೆ ಅರಿಕೆ ಮಾಡಿಕೊಳ್ಳುತ್ತೇವೆ.</verse>
				<verse number="13">ಆ ಪಟ್ಟಣವನ್ನೂ, ಅದರ ಗೋಡೆಗಳನ್ನೂ ಕಟ್ಟುವುದು ಮುಗಿದರೆ, ಅವರು ಕಪ್ಪ, ತೆರಿಗೆ, ಸುಂಕಗಳನ್ನು ಕೊಡುವುದಿಲ್ಲ. ಕಡೆಯಲ್ಲಿ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.</verse>
				<verse number="14">ನಾವಾದರೋ ಅರಮನೆಯ ಉಪ್ಪನ್ನು ತಿನ್ನುವವರು, ಅರಸರಿಗೆ ಅಪಮಾನವಾಗುವುದನ್ನು ಕಂಡು ಸುಮ್ಮನೆ ಇರುವುದು ಉಚಿತವಲ್ಲವೆಂದು ತಿಳಿದು, ತಮಗೆ ಈ ಪತ್ರದ ಮೂಲಕ ಸುದ್ದಿ ಕಳುಹಿಸಿದ್ದೇವೆ.</verse>
				<verse number="15">ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರ ಗ್ರಂಥದಲ್ಲಿ ಪರಿಶೋಧಿಸಬೇಕೆಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣ ರಾಜಕಂಟಕವಾದ ಪಟ್ಟಣ. ಅರಸರಿಗೂ, ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥ ಪಟ್ಟಣ. ಇದು ಪೂರ್ವಕಾಲದಿಂದಲೂ ದೇಶದ್ರೋಹ ಮಾಡುತ್ತಾ ಬಂದಿದೆ ಎಂದೂ ಹಾಗು ಆ ಕಾರಣದಿಂದಲೇ ನೆಲಸಮವಾಯಿತೆಂದೂ ಆ ಚರಿತ್ರ ಗ್ರಂಥದಲ್ಲಿ ಕಂಡುಬರುತ್ತದೆ.</verse>
				<verse number="16">ಆ ಪಟ್ಟಣವನ್ನೂ, ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ, ತಮಗೆ ಯೂಫ್ರೇಟೀಸ್ ನದಿಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸನಿಗೆ ಅರಿಕೆ ಮಾಡಿಕೊಳ್ಳುತ್ತೇವೆ.</verse>
				<verse number="17">ಈ ಪತ್ರಕ್ಕೆ ಅರಸನು ಅವರಿಗೆ ಕೊಟ್ಟ ಉತ್ತರ: ದೇಶಾಧಿಪತಿಯಾದ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಅವರಿಗೂ, ಸಮಾರ್ಯದಲ್ಲಿರುವವರಿಗೂ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಇತರರಿಗೂ, ಕ್ಷೇಮಾಭಿಲಾಶೆಗಳು.</verse>
				<verse number="18">ನೀವು ಕಳುಹಿಸಿದ್ದ ಪತ್ರವನ್ನು ನನ್ನ ಸನ್ನಿಧಿಯಲ್ಲಿ ಸ್ಪಷ್ಟವಾಗಿ ಓದಿ ಅನುವಾದ ಮಾಡಲಾಯಿತು.</verse>
				<verse number="19">ನನ್ನ ಆಜ್ಞಾನುಸಾರ ವಿಚಾರಣೆಯಾದಾಗ, ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರೋಧವಾಗಿ ಪ್ರತಿಭಟಿಸುತ್ತಾ, ದೇಶದ್ರೋಹ ಮಾಡುತ್ತಾ ಬಂದಿದ್ದಾರೆ.</verse>
				<verse number="20">ಇದಲ್ಲದೆ ಯೆರೂಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ಯೂಫ್ರೇಟೀಸ್ ನದಿಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ.</verse>
				<verse number="21">ಆದ್ದರಿಂದ ಆ ಜನರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವವರೆಗೆ ಆ ಪಟ್ಟಣವನ್ನು ಕಟ್ಟಲು ಅವಕಾಶ ಕೊಡಬಾರದೆಂತಲೂ ಪ್ರಕಟಿಸಿರಿ.</verse>
				<verse number="22">ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದ ಇರಿ, ಉದಾಸೀನರಾಗಿರಬೇಡಿರಿ.</verse>
				<verse number="23">ಅರಸನಾದ ಅರ್ತಷಸ್ತನ ಪತ್ರದ ಪ್ರತಿಯು ರೆಹೂಮನಿಗೂ, ಕಾರ್ಯದರ್ಶಿ ಶಿಂಷೈಯಿಗೂ, ಅವರ ಜೊತೆಗಾರರಿಗೂ ಓದಿದ ತರುವಾಯ, ಅವರು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರ ಬಳಿಗೆ ತ್ವರೆಯಾಗಿ ಹೋಗಿ, ಒತ್ತಾಯದಿಂದ ಮತ್ತು ಅಧಿಕಾರದಿಂದ ಅವರನ್ನು ನಿಲ್ಲಿಸುವಂತೆ ಮಾಡಿದರು.</verse>
				<verse number="24">ಅಂದಿನಿಂದ ಪರ್ಷಿಯ ದೇಶದ ರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಯೆರೂಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸವು ನಿಂತುಹೋಯಿತು.</verse>
			</chapter>
			<chapter number="5">
				<verse number="1">ಈಗ ಪ್ರವಾದಿಗಳಾದ ಹಗ್ಗಾಯನೂ, ಇದ್ದೋನನ ಮಗ ಜೆಕರ್ಯನೂ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರಿಗೆ, ಇಸ್ರಾಯೇಲ್ ದೇವರ ನಾಮದಲ್ಲಿ ಅವರಿಗೆ ಪ್ರವಾದಿಸಿದರು.</verse>
				<verse number="2">ಆಗ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ, ಯೋಚಾದಾಕನ ಮಗ ಯೇಷೂವನೂ ಎದ್ದು ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಪುನಃ ಕಟ್ಟಿಸಲು ಪ್ರಾರಂಭಿಸಿದರು. ಅವರಿಗೆ ಸಹಾಯಕರಾಗಿ ದೇವರ ಪ್ರವಾದಿಗಳು ಅವರ ಸಂಗಡ ಇದ್ದರು.</verse>
				<verse number="3">ಆ ವೇಳೆಯಲ್ಲಿ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಪ್ರದೇಶಗಳ ಅಧಿಪತಿಯಾಗಿದ್ದ ತತ್ತೆನೈಯೂ, ಶೆತರ್ ಬೋಜೆನೈಯೂ, ಅವರ ಜೊತೆಗಾರರೂ ಅವರ ಬಳಿಗೆ ಬಂದು, “ಈ ಆಲಯವನ್ನು ಪುನಃ ಕಟ್ಟಿ ತೀರಿಸುವುದಕ್ಕೆ ನಿಮಗೆ ಅಪ್ಪಣೆ ಕೊಟ್ಟವರು ಯಾರು?” ಎಂದು ಕೇಳಿದರು.</verse>
				<verse number="4">ಇದಲ್ಲದೆ ಅವರು, “ಈ ಕಟ್ಟಡವನ್ನು ಕಟ್ಟಿಸುವವರ ಹೆಸರುಗಳೇನು?” ಎಂದು ವಿಚಾರಿಸಿದರು.</verse>
				<verse number="5">ಆದರೆ ಈ ಕಾರ್ಯವು ದಾರ್ಯಾವೆಷನ ಬಳಿಗೆ ಬರುವವರೆಗೂ, ಅವರು ಇವರನ್ನು ನಿಲ್ಲಿಸದ ಹಾಗೆ ಇವರ ದೇವರ ಕಣ್ಣು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆಗ ಇದನ್ನು ಕುರಿತು ಅವರು ಉತ್ತರವನ್ನು ಪತ್ರದಲ್ಲಿ ಕಳುಹಿಸಿದರು.</verse>
				<verse number="6">ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈನೂ, ಶೆತರ್ ಬೋಜೆನೈಯೂ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅವನ ಜೊತೆಗಾರರೂ, ಅರಸನಾದ ದಾರ್ಯಾವೆಷನಿಗೆ ಪತ್ರ ಬರೆದು ಕಳುಹಿಸಿದರು.</verse>
				<verse number="7">ಅವರು ಅವನ ಬಳಿಗೆ ಕಳುಹಿಸಿದ ಪತ್ರದ ಪ್ರತಿಯಲ್ಲಿ: ಅರಸನಾದ ದಾರ್ಯಾವೆಷನಿಗೆ: ಸರ್ವತಾ ಕ್ಷೇಮ.</verse>
				<verse number="8">ಅರಸನಿಗೆ ತಿಳಿಯಬೇಕಾದದ್ದೇನೆಂದರೆ, ನಾವು ಯೆಹೂದರ ದೇಶದಲ್ಲಿರುವ ಮಹಾ ದೇವರ ಆಲಯಕ್ಕೆ ಹೋದೆವು. ಅದನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಿದ್ದಾರೆ. ಗೋಡೆಗಳ ಮೇಲೆ ತೊಲೆಗಳನ್ನು ಇಡುತ್ತಿದ್ದಾರೆ. ಆ ಕೆಲಸವು ತೀವ್ರವಾಗಿ ನಡೆಯುತ್ತಾ ಅವರ ಕೈಗಳಿಂದ ವೇಗವಾಗಿ ವೃದ್ಧಿಯಾಗುತ್ತದೆ.</verse>
				<verse number="9">“ಆಗ ಈ ಆಲಯವನ್ನು ಕಟ್ಟುವುದಕ್ಕೂ ನಿಮಗೆ ಅಪ್ಪಣೆ ಕೊಟ್ಟವರು ಯಾರು?” ಎಂದು ನಾವು ಆ ಹಿರಿಯರನ್ನು ಕೇಳಿದೆವು.</verse>
				<verse number="10">ಇದಲ್ಲದೆ ಅವರಲ್ಲಿರುವ ಮುಖ್ಯಸ್ಥರ ಹೆಸರುಗಳನ್ನು ನಿಮಗೆ ಬರೆದು ತಿಳಿಸುವಂತೆ ಅವರ ಹೆಸರುಗಳನ್ನು ಕೇಳಿದೆವು.</verse>
				<verse number="11">ಅವರು ನಮಗೆ ಕೊಟ್ಟ ಉತ್ತರವೇನೆಂದರೆ: “ನಾವು ಪರಲೋಕ ಮತ್ತು ಭೂಲೋಕಗಳ ದೇವರ ಸೇವಕರಾಗಿದ್ದೇವೆ. ಅನೇಕ ವರ್ಷಗಳ ಹಿಂದೆ ಇಸ್ರಾಯೇಲಿನಲ್ಲಿದ್ದ ಒಬ್ಬ ಮಹಾ ಅರಸನು ಕಟ್ಟಿದ್ದ ಆಲಯವನ್ನು ನಾವು ಪುನಃ ಕಟ್ಟುತ್ತಿದ್ದೇವೆ.</verse>
				<verse number="12">ಆದರೆ ನಮ್ಮ ಪಿತೃಗಳು ಪರಲೋಕದ ದೇವರಿಗೆ ಕೋಪವನ್ನು ಎಬ್ಬಿಸಿದ ಕಾರಣ, ದೇವರು ಅವರನ್ನು ಬಾಬಿಲೋನಿನ ಅರಸನಾಗಿದ್ದ ಕಸ್ದೀಯರ ದೇಶದವನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸಿಕೊಟ್ಟರು. ಆ ಅರಸನು ಆ ಆಲಯವನ್ನು ಹಾಳು ಮಾಡಿ, ಜನರನ್ನು ಬಾಬಿಲೋನಿಗೆ ಸೆರೆಹಿಡಿದುಕೊಂಡು ಹೋದನು.</verse>
				<verse number="13">“ಆದರೆ ಬಾಬಿಲೋನಿನ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ದೇವರ ಈ ಆಲಯವನ್ನು ಪುನಃ ಕಟ್ಟಲು ಆಜ್ಞೆಯನ್ನು ಕೊಟ್ಟನು.</verse>
				<verse number="14">ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ದೇವಾಲಯದಿಂದ ತೆಗೆದುಕೊಂಡು, ಬಾಬಿಲೋನಿನ ಮಂದಿರಕ್ಕೆ ತಂದ ದೇವಸ್ಥಾನದ ಬೆಳ್ಳಿಬಂಗಾರದ ಸಾಮಗ್ರಿಗಳನ್ನು ಅರಸನಾದ ಕೋರೆಷನು ಬಾಬಿಲೋನಿನ ಮಂದಿರದಿಂದ ತೆಗೆದುಕೊಂಡು, ತಾನು ನೇಮಿಸಿದ ಅಧಿಪತಿಯಾದ ಶೆಷ್ಬಚ್ಚರನಿಗೆ ಒಪ್ಪಿಸಿಕೊಟ್ಟನು.</verse>
				<verse number="15">ಅವನಿಗೆ, ‘ಈ ಸಾಮಗ್ರಿಗಳನ್ನು ತೆಗೆದುಕೊಂಡು ಯೆರೂಸಲೇಮಿನಲ್ಲಿರುವ ದೇವಾಲಯಕ್ಕೆ ತೆಗೆದುಕೊಂಡು ಹೋಗು. ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟು,’ ಎಂದು ಆಜ್ಞಾಪಿಸಿದನು.</verse>
				<verse number="16">“ಆಗ ಶೆಷ್ಬಚ್ಚರನು ಬಂದು, ಯೆರೂಸಲೇಮಿನಲ್ಲಿರುವ ದೇವರ ಆಲಯಕ್ಕೆ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನವರೆಗೂ ಕಟ್ಟುವ ಕೆಲಸ ನಡೆಯುತ್ತಾ ಇದೆ, ಇನ್ನೂ ಮುಗಿಯಲಿಲ್ಲ,” ಎಂದರು.</verse>
				<verse number="17">“ಆದ್ದರಿಂದ ಅರಸನಿಗೆ ಸರಿ ತೋರುವುದಾದರೆ, ಯೆರೂಸಲೇಮಿನಲ್ಲಿರುವ ದೇವರ ಆಲಯವನ್ನು ಪುನಃ ಕಟ್ಟಲು ಅರಸನಾದ ಕೋರೆಷನು ಅಪ್ಪಣೆ ಮಾಡಿದ್ದು ಉಂಟೋ, ಇಲ್ಲವೋ ಎಂಬುದನ್ನು ಬಾಬಿಲೋನಿನಲ್ಲಿರುವ ಅರಸನ ಬೊಕ್ಕಸದ ಮನೆಯಲ್ಲಿ ವಿಚಾರಿಸಲಿ. ತರುವಾಯ ಅರಸನು ಈ ಕಾರ್ಯಕ್ಕೋಸ್ಕರ ತನ್ನ ಚಿತ್ತವೇನೆಂದು ನಮಗೆ ತಿಳಿಸೋಣವಾಗಲಿ,” ಎಂಬುದಾಗಿ ಉತ್ತರಕೊಟ್ಟರು.</verse>
			</chapter>
			<chapter number="6">
				<verse number="1">ಆಗ ಅರಸನಾದ ದಾರ್ಯಾವೆಷನ ಅಪ್ಪಣೆಯ ಪ್ರಕಾರ ಅವರು ಬಾಬಿಲೋನಿನ ಭಂಡಾರದಲ್ಲಿದ್ದ ಗ್ರಂಥಾಲಯದಲ್ಲಿ ಹುಡುಕಿದರು.</verse>
				<verse number="2">ಮೇದ್ಯರ ದೇಶದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಜ್ಞಾಪಕಾರ್ಥದ ಒಂದು ಸುರುಳಿ ಸಿಕ್ಕಿತು. ಅದರಲ್ಲಿ ಹೀಗೆ ಬರೆಯಲಾಗಿತ್ತು:</verse>
				<verse number="3">ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನೆಂದರೆ: ಜನರು ಬಲಿಗಳನ್ನು ಸಮರ್ಪಿಸುವುದಕ್ಕಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಅಸ್ತಿವಾರಗಳನ್ನು ಬಲವಾಗಿ ಹಾಕಬೇಕು. ಅದರ ಎತ್ತರ 27 ಮೀಟರ್, ಅದರ ಅಗಲ 27 ಮೀಟರ್ ಆಗಿರಲಿ.</verse>
				<verse number="4">ದೊಡ್ಡ ಕಲ್ಲುಗಳ ಮೂರು ಸಾಲುಗಳೂ, ಹೊಸ ತೊಲೆಗಳ ಒಂದು ಸಾಲೂ ಇರಲಿ. ಅದರ ಖರ್ಚು ಅರಮನೆಯ ಬೊಕ್ಕಸದಿಂದ ಕೊಡಲಾಗುವುದು.</verse>
				<verse number="5">ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತೆಗೆದುಕೊಂಡು ಬಾಬಿಲೋನಿಗೆ ಒಯ್ದ ದೇವರ ಆಲಯದ ಬೆಳ್ಳಿಬಂಗಾರದ ಸಲಕರಣೆಗಳನ್ನು ತಿರುಗಿ ಯೆರೂಸಲೇಮಿನಲ್ಲಿರುವ ಮಂದಿರಕ್ಕೆ ತೆಗೆದುಕೊಂಡುಹೋಗಿ, ದೇವರ ಆಲಯದೊಳಗೆ ಅದರದರ ಸ್ಥಳದಲ್ಲಿ ಇಡಬೇಕು.</verse>
				<verse number="6">ಬಳಿಕ ದಾರ್ಯಾವೆಷನು ಬರೆದು ಕಳುಹಿಸಿದ್ದು ಏನೆಂದರೆ, ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಅಧಿಪತಿಯಾದ ತತ್ತೆನೈನೇ, ಶೆತರ್ ಬೋಜೆನೈಯೇ, ನದಿಯ ಆಚೆಯಲ್ಲಿರುವ ನಿಮ್ಮ ಜೊತೆಗಾರರು ಸಹ ಆ ಸ್ಥಳವನ್ನು ಬಿಟ್ಟು ದೂರವಾಗಿರಿ.</verse>
				<verse number="7">ದೇವರ ಆಲಯವನ್ನು ಕಟ್ಟುವ ಕೆಲಸಕ್ಕೆ ನೀವು ಅಡ್ಡಿಮಾಡಬೇಡಿರಿ. ಯೆಹೂದ್ಯರ ಅಧಿಪತಿಯೂ, ಯೆಹೂದ್ಯರ ಹಿರಿಯರೂ ಅದರ ಸ್ಥಳದಲ್ಲಿ ದೇವರ ಆಲಯವನ್ನು ಕಟ್ಟಿಸಲಿ.</verse>
				<verse number="8">ಇದಲ್ಲದೆ ದೇವರ ಈ ಆಲಯವನ್ನು ಕಟ್ಟುವುದಕ್ಕೆ ಯೆಹೂದ್ಯರ ಹಿರಿಯರಿಗೆ ನೀವು ಮಾಡತಕ್ಕದ್ದನ್ನು ಕುರಿತು ನಾನು ಕೊಡುವ ಅಪ್ಪಣೆ ಏನೆಂದರೆ: ಅವರು ಅಭ್ಯಂತರ ಮಾಡದ ಹಾಗೆ ನದಿಯ ಆಚೆಯಲ್ಲಿಂದ ಬರುವ ಅರಸನ ತೆರಿಗೆಯಿಂದಲೇ ಈ ಮನುಷ್ಯರಿಗೆ ವೆಚ್ಚವನ್ನು ಕೊಡಬೇಕು.</verse>
				<verse number="9">ಪರಲೋಕದ ದೇವರಿಗೆ ದಹನಬಲಿಗಳ ನಿಮಿತ್ತ ಅವರಿಗೆ ಬೇಕಾದ ಹೋರಿಗಳೂ, ಟಗರುಗಳೂ, ಕುರಿಮರಿಗಳೂ, ಗೋಧಿಯೂ, ಉಪ್ಪೂ, ದ್ರಾಕ್ಷಾರಸವೂ, ಎಣ್ಣೆಯೂ ಪ್ರತಿದಿನ ತಪ್ಪದೆ ಯೆರೂಸಲೇಮಿನಲ್ಲಿರುವ ಯಾಜಕರ ನೇಮಕದ ಪ್ರಕಾರ ಅವರಿಗೆ ಕೊಡಬೇಕು.</verse>
				<verse number="10">ಇದಲ್ಲದೆ ಅವರು ಪರಲೋಕದ ದೇವರಿಗೆ ಸುವಾಸನೆಯುಳ್ಳ ಬಲಿಗಳನ್ನು ಅರ್ಪಿಸುವ ಹಾಗೆಯೂ, ಅರಸನ ಪ್ರಾಣಕ್ಕೋಸ್ಕರವೂ, ಅವನ ಮಕ್ಕಳ ಪ್ರಾಣಕ್ಕೋಸ್ಕರವೂ ಪ್ರಾರ್ಥನೆ ಮಾಡಬೇಕು.</verse>
				<verse number="11">ನಾನು ಕೊಡುವ ಅಪ್ಪಣೆ ಏನೆಂದರೆ, ಯಾವನಾದರೂ ಈ ನನ್ನ ಆಜ್ಞೆಯನ್ನು ಬದಲು ಮಾಡಿದರೆ, ಅವನ ಮನೆಯಿಂದ ಒಂದು ತೊಲೆಯನ್ನು ತೆಗೆದು ಅದರಿಂದಲೇ ಅವನನ್ನು ಗಲ್ಲಿಗೆ ಏರಿಸಬೇಕು. ಅವನ ಮನೆಯನ್ನು ಇದರ ನಿಮಿತ್ತ ತಿಪ್ಪೆಯನ್ನಾಗಿ ಮಾಡಿಬಿಡಬೇಕು.</verse>
				<verse number="12">ಇದಲ್ಲದೆ ದೇವರು ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡಿರಲು, ಯೆರೂಸಲೇಮಿನ ಈ ದೇವಾಲಯವನ್ನು ಕಟ್ಟಬೇಕೆಂಬ ಆಜ್ಞೆಯನ್ನು ಬದಲಿಸುವುದಕ್ಕಾಗಲಿ, ದೇವಾಲಯವನ್ನು ನಾಶಮಾಡುವುದಕ್ಕಾಗಲಿ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ, ಜನರನ್ನೂ ದೇವರು ನಾಶಮಾಡಲಿ. ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದ್ದೇನೆ. ಇದನ್ನು ಶ್ರದ್ಧೆಯಿಂದ ಪಾಲಿಸಬೇಕು, ಎಂಬುದು.</verse>
				<verse number="13">ಆಗ ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ, ಶೆತರ್ ಬೋಜೆನೈಯೂ, ಅವರ ಜೊತೆಗಾರರೂ ಅರಸನಾದ ದಾರ್ಯಾವೆಷನು ಕಳುಹಿಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು.</verse>
				<verse number="14">ಹಾಗೆಯೇ ಯೆಹೂದ್ಯರ ಹಿರಿಯರು ಕಟ್ಟಿಸಿ, ಪ್ರವಾದಿಗಳಾದ ಹಗ್ಗಾಯನೂ, ಇದ್ದೋನನ ಮಗನಾದ ಜೆಕರ್ಯನೂ ಪ್ರವಾದಿಸಿದ್ದರಿಂದ ಅಭಿವೃದ್ಧಿಯನ್ನು ಹೊಂದಿದರು. ಅವರು ಇಸ್ರಾಯೇಲ್ ದೇವರ ಅಪ್ಪಣೆಯ ಪ್ರಕಾರವೂ, ಕೋರೆಷ್, ದಾರ್ಯಾವೆಷ್ ಹಾಗೂ ಅರ್ತಷಸ್ತ ಎಂಬ ಪರ್ಷಿಯದ ರಾಜರ ಅಪ್ಪಣೆಯ ಪ್ರಕಾರವೂ ಕಟ್ಟಿ ತೀರಿಸಿದರು.</verse>
				<verse number="15">ಅರಸನಾದ ದಾರ್ಯಾವೆಷನ ಆಳಿಕೆಯ ಆರನೆಯ ವರ್ಷದ ಆಡಾರ್ ತಿಂಗಳ, ಮೂರನೆಯ ದಿವಸದಲ್ಲಿ ಈ ಆಲಯವನ್ನು ಕಟ್ಟಿ ಮುಗಿಸಲಾಯಿತು.</verse>
				<verse number="16">ಆಗ ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ಸೆರೆಯಿಂದ ಬಂದ ಮಿಕ್ಕಾದವರೂ ದೇವರ ಆಲಯವನ್ನು ಸಂತೋಷದಿಂದ ಪ್ರತಿಷ್ಠಾಪಿಸಿದರು.</verse>
				<verse number="17">ದೇವರ ಆಲಯದ ಪ್ರತಿಷ್ಠಾಪನೆಗೋಸ್ಕರ ನೂರು ಹೋರಿಗಳನ್ನೂ, ಇನ್ನೂರು ಟಗರುಗಳನ್ನೂ, ನಾನೂರು ಕುರಿಮರಿಗಳನ್ನೂ, ಇಸ್ರಾಯೇಲ್ ಕುಲ ಗೋತ್ರಗಳ ಲೆಕ್ಕದ ಪ್ರಕಾರ, ಸಮಸ್ತ ಇಸ್ರಾಯೇಲರ ದೋಷಪರಿಹಾರ ಬಲಿಗಾಗಿ ಹನ್ನೆರಡು ಮೇಕೆಯ ಹೋತಗಳನ್ನೂ ಅರ್ಪಿಸಿದರು.</verse>
				<verse number="18">ಮೋಶೆಯ ಗ್ರಂಥದಲ್ಲಿ ಬರೆದ ಹಾಗೆ ಯೆರೂಸಲೇಮಿನಲ್ಲಿ ವಾಸವಾಗಿರುವ ದೇವರ ಆರಾಧನೆಗೋಸ್ಕರ ಯಾಜಕರನ್ನು ಮತ್ತು ಲೇವಿಯರನ್ನು ಅವರ ಸರತಿಯ ಪ್ರಕಾರವೂ ನೇಮಿಸಿದರು.</verse>
				<verse number="19">ಇದಲ್ಲದೆ ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ, ಹದಿನಾಲ್ಕನೆಯ ದಿವಸದಲ್ಲಿ ಪಸ್ಕವನ್ನು ಆಚರಿಸಿದರು.</verse>
				<verse number="20">ಯಾಜಕರೂ ಲೇವಿಯರೂ ಕೂಡ ಶುದ್ಧ ಮಾಡಿಕೊಂಡಿದ್ದರು. ಅವರೆಲ್ಲರು ಶುದ್ಧರಾದ ನಂತರ, ಲೇವಿಯರು ಸೆರೆಯಿಂದ ಬಂದವರೆಲ್ಲರಿಗೋಸ್ಕರವೂ, ಯಾಜಕರಾದ ತಮ್ಮ ಸಹೋದರರಿಗೋಸ್ಕರವೂ, ತಮಗೋಸ್ಕರವೂ ಪಸ್ಕದ ಕುರಿಮರಿಯನ್ನು ವಧಿಸಿದರು.</verse>
				<verse number="21">ಸೆರೆಯಿಂದ ತಿರುಗಿ ಬಂದ ಇಸ್ರಾಯೇಲರು ತಮ್ಮ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರನ್ನು ಹುಡುಕಲು ದೇಶದ ಜನಾಂಗಗಳ ಅಶುದ್ಧತೆಯಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡು, ಅವರ ಕಡೆಗೆ ಸೇರಿದ ಸಮಸ್ತರೂ ಅದನ್ನು ತಿಂದು,</verse>
				<verse number="22">ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು. ಏಕೆಂದರೆ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವುದಕ್ಕೆ ಅಸ್ಸೀರಿಯ ದೇಶದ ಅರಸನ ಹೃದಯವನ್ನು, ಅವರ ಕಡೆಗೆ ಮನಪರಿವರ್ತಿಸಿದ್ದರಿಂದ ಯೆಹೋವ ದೇವರು ಅವರನ್ನು ಸಂತೋಷಪಡಿಸಿದರು.</verse>
			</chapter>
			<chapter number="7">
				<verse number="1">ಈ ಕಾರ್ಯಗಳಾದ ತರುವಾಯ ಪಾರಸಿಯ ಅರಸನಾದ ಅರ್ತಷಸ್ತನ ಆಳಿಕೆಯಲ್ಲಿ ಎಜ್ರನು ಬಾಬಿಲೋನಿನಿಂದ ಹೊರಟುಹೋದನು. ಇವನು ಸೆರಾಯನ ಮಗನು; ಇವನು ಅಜರ್ಯನ ಮಗನು; ಇವನು ಹಿಲ್ಕೀಯನ ಮಗನು;</verse>
				<verse number="2">ಇವನು ಶಲ್ಲೂಮನ ಮಗನು; ಇವನು ಚಾದೋಕನ ಮಗನು; ಇವನು ಅಹೀಟೂಬನ ಮಗನು;</verse>
				<verse number="3">ಇವನು ಅಮರ್ಯನ ಮಗನು; ಇವನು ಅಜರ್ಯನ ಮಗನು; ಇವನು ಮೆರಾಯೋತನ ಮಗನು;</verse>
				<verse number="4">ಇವನು ಜೆರಹ್ಯನ ಮಗನು; ಇವನು ಉಜ್ಜೀಯನ ಮಗನು; ಇವನು ಬುಕ್ಕೀಯ ಮಗನು;</verse>
				<verse number="5">ಇವನು ಅಬೀಷೂವನ ಮಗನು; ಇವನು ಫೀನೆಹಾಸನ ಮಗನು; ಇವನು ಎಲಿಯಾಜರನ ಮಗನು; ಇವನು ಮುಖ್ಯಯಾಜಕನಾದ ಆರೋನನ ಮಗನು.</verse>
				<verse number="6">ಈ ಎಜ್ರನು ಬಾಬಿಲೋನಿನಿಂದ ಬಂದನು, ಅವನು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರು ಕೊಟ್ಟ ಮೋಶೆಯ ನಿಯಮದಲ್ಲಿ ಪಾಂಡಿತ್ಯ ಪಡೆದ ನಿಯಮಶಾಸ್ತ್ರಿ ಆಗಿದ್ದನು. ಅವನ ಮೇಲೆ ಅವನ ದೇವರಾಗಿರುವ ಯೆಹೋವ ದೇವರ ಕೈ ಇದ್ದುದರಿಂದ, ಅವನು ಕೇಳಿದ್ದನ್ನೆಲ್ಲಾ ಅರಸನು ಕೊಟ್ಟನು.</verse>
				<verse number="7">ಅವನ ಸಂಗಡ ಇಸ್ರಾಯೇಲರಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಹಾಡುಗಾರರಲ್ಲಿಯೂ ದ್ವಾರಪಾಲಕರಲ್ಲಿಯೂ ದೇವಾಲಯದ ಸೇವಕರಲ್ಲಿಯೂ ಕೆಲವರು ಅರಸನಾದ ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೆರೂಸಲೇಮಿಗೆ ಹೋದರು.</verse>
				<verse number="8">ಅರಸನ ಏಳನೆಯ ವರ್ಷದ, ಐದನೆಯ ತಿಂಗಳಲ್ಲಿ ಎಜ್ರನು ಯೆರೂಸಲೇಮಿಗೆ ಬಂದನು.</verse>
				<verse number="9">ಅವನು ಮೊದಲನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಬಾಬಿಲೋನಿನಿಂದ ಹೊರಟು, ಐದನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು. ಏಕೆಂದರೆ ಅವನ ದೇವರಾದ ಯೆಹೋವ ದೇವರ ಹಸ್ತವು ಅವನ ಮೇಲಿತ್ತು.</verse>
				<verse number="10">ಏಕೆಂದರೆ ಎಜ್ರನು ಯೆಹೋವ ದೇವರ ನಿಯಮವನ್ನು ಅಭ್ಯಾಸ ಮಾಡುವುದಕ್ಕೂ ಅದನ್ನು ಕೈಗೊಂಡು ನಡೆಯುವುದಕ್ಕೂ ಇಸ್ರಾಯೇಲರಿಗೆ ಅದರ ತೀರ್ಪುಗಳನ್ನು ಹಾಗೂ ನಿಯಮಗಳನ್ನು ಬೋಧಿಸುವುದಕ್ಕೂ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದನು.</verse>
				<verse number="11">ಯಾಜಕನು, ನಿಯಮಶಾಸ್ತ್ರಿಯು ಹಾಗೂ ಇಸ್ರಾಯೇಲರಿಗೆ ಕೊಡಲಾದ ಯೆಹೋವ ದೇವರ ಆಜ್ಞಾಸೂತ್ರಗಳಲ್ಲಿ ವಿದ್ವಾಂಸನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ನಕಲು ಇದು:</verse>
				<verse number="12">ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ, ಪರಲೋಕ ದೇವರ ನಿಯಮದಲ್ಲಿ ಪ್ರವೀಣನೂ ಆದ ಎಜ್ರನಿಗೆ, ವಂದನೆಗಳು.</verse>
				<verse number="13">ನನ್ನ ರಾಜ್ಯದಲ್ಲಿರುವ ಇಸ್ರಾಯೇಲರಲ್ಲಿ, ಯಾಜಕರಲ್ಲಿ ಹಾಗು ಲೇವಿಯರಲ್ಲಿ ಯಾರಿಗೆ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸಿದೆಯೋ, ಅವರೆಲ್ಲರು ನಿನ್ನೊಂದಿಗೆ ಹೋಗಬಹುದೆಂದು ಅಪ್ಪಣೆ ಮಾಡುತ್ತೇನೆ.</verse>
				<verse number="14">ನೀನು ಹೋಗಿ ಯೆಹೂದದವರ ಮತ್ತು ಯೆರೂಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ನಿಯಮ ಗ್ರಂಥಕ್ಕೆ ಅನುಗುಣವಾಗಿ ಇದೆಯೋ, ಇಲ್ಲವೋ ವಿಮರ್ಶೆ ಮಾಡಬೇಕು.</verse>
				<verse number="15">ಅರಸನು ಮತ್ತು ಅವನ ಮಂತ್ರಿಗಳು ಯೆರೂಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೆ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರವನ್ನು,</verse>
				<verse number="16">ಬಾಬಿಲೋನ್ ಸಂಸ್ಥಾನದಲ್ಲಿ ಸಿಕ್ಕುವ ಬೆಳ್ಳಿಬಂಗಾರವನ್ನು ಹಾಗು ಇಸ್ರಾಯೇಲ್ ಜನ ಸಾಮಾನ್ಯರೂ, ಯಾಜಕರೂ, ಯೆರೂಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವಂತ ಇಚ್ಛೆಯಿಂದ ಕೊಡುವ ಕಾಣಿಕೆಗಳನ್ನು ಅಲ್ಲಿಗೆ ಒಪ್ಪಿಸಬೇಕು. ಹೀಗೆಂದು ತಿಳಿಸಿ, ನಾನೂ ಮತ್ತು ನನ್ನ ಏಳುಮಂದಿ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತಿದ್ದೇವೆ.</verse>
				<verse number="17">ನೀನು ಈ ಹಣದಿಂದ ಹೋರಿ, ಟಗರು, ಕುರಿ, ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು, ಅವುಗಳನ್ನು ಯೆರೂಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಸಮರ್ಪಿಸಬೇಕು.</verse>
				<verse number="18">ಉಳಿದ ಬೆಳ್ಳಿಬಂಗಾರವನ್ನು, ನಿಮ್ಮ ದೇವರ ಚಿತ್ತದ ಪ್ರಕಾರ ನಿನಗೂ, ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚ ಮಾಡಿರಿ.</verse>
				<verse number="19">ನಿನ್ನ ದೇವರ ಆಲಯದ ಆರಾಧನೆಗಾಗಿ ನಿನ್ನ ವಶಕ್ಕೆ ಕೊಡುವ ಸಾಮಗ್ರಿಗಳನ್ನು ಯೆರೂಸಲೇಮಿನ ದೇವರ ಸನ್ನಿಧಿಗೆ ತೆಗೆದುಕೊಂಡು ಹೋಗು.</verse>
				<verse number="20">ನಿನ್ನ ದೇವರ ಆಲಯಕ್ಕಾಗಿ ನೀನು ಬೇರೆ ಯಾವುದನ್ನಾದರೂ ವೆಚ್ಚಮಾಡಬೇಕಾದರೆ, ಅದನ್ನು ರಾಜ ಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು.</verse>
				<verse number="21">“ಅರ್ತಷಸ್ತ ರಾಜನಾದ ನಾನು, ಯೂಫ್ರೇಟೀಸ್ ನದಿ ಆಚೆಯ ಪ್ರಾಂತಗಳ ಭಂಡಾರ ಮುಖ್ಯಸ್ಥರಿಗೆ ಆಜ್ಞಾಪಿಸುವುದೇನೆಂದರೆ ಯಾಜಕನೂ, ಪರಲೋಕ ದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.</verse>
				<verse number="22">3.4 ಮೆಟ್ರಿಕ್ ಟನ್ ಬೆಳ್ಳಿಯನ್ನು, 16 ಮೆಟ್ರಿಕ್ ಟನ್ ಗೋಧಿಯನ್ನು, 2,200 ಲೀಟರ್ ದ್ರಾಕ್ಷಾರಸವನ್ನು, 2,200 ಲೀಟರ್ ಎಣ್ಣೆಯನ್ನು, ಇಷ್ಟರ ಮಟ್ಟಿಗೂ ಕೊಡಬೇಕು. ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು.</verse>
				<verse number="23">ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೇವ ಕೋಪವುಂಟಾಗದ ಹಾಗೆ, ನೀವು ಪರಲೋಕ ದೇವರ ಆಜ್ಞಾನುಸಾರ ಬೇಕಾದುದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಶ್ರದ್ಧೆಯಿಂದ ಒದಗಿಸಿಕೊಡಬೇಕು.</verse>
				<verse number="24">ಇದಲ್ಲದೆ, ಆ ದೇವಾಲಯದ ಯಾಜಕ, ಲೇವಿಯ, ಗಾಯಕ, ದ್ವಾರಪಾಲಕ, ಚಾಕರ ಮುಂತಾದ ಸೇವಕರಲ್ಲಿ ಯಾವನಿಂದಲೂ ಶುಲ್ಕ, ತೆರಿಗೆ, ಸುಂಕ, ಇವುಗಳನ್ನು ವಸೂಲಿ ಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.”</verse>
				<verse number="25">“ಎಜ್ರನೇ, ನಿನ್ನಲ್ಲಿರುವ ನಿನ್ನ ದೇವರ ಜ್ಞಾನಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ, ದಂಡಾಧಿಕಾರಿಯನ್ನೂ ನೇಮಿಸು. ಅವರು ನದಿಯಾಚೆಯ ಇಸ್ರಾಯೇಲರಲ್ಲಿ, ನಿನ್ನ ದೇವರ ನಿಯಮಗಳನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀನು ಅದನ್ನು ಕಲಿಸಬೇಕು.</verse>
				<verse number="26">ನಿನ್ನ ದೇವರಾಜ್ಞೆಯನ್ನೂ, ರಾಜಾಜ್ಞೆಯನ್ನೂ ಕೈಗೊಳ್ಳದವರಿಗೆಲ್ಲಾ ಮರಣದಂಡನೆ ವಿಧಿಸುವುದು, ಗಡಿಪಾರು ಮಾಡುವುದು, ದಂಡ ತೆರಿಸುವುದು, ಬೇಡಿ ಹಾಕುವುದು, ಈ ವಿಧವಾದ ಶಿಕ್ಷೆಯನ್ನು ತಪ್ಪದೆ ನೀಡಬೇಕು.”</verse>
				<verse number="27">ಆಗ ಎಜ್ರನು, “ನಮ್ಮ ತಂದೆಗಳ ದೇವರಾಗಿರುವ ಯೆಹೋವ ದೇವರು ಸ್ತುತಿಹೊಂದಲಿ! ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಆಲಯಕ್ಕೆ ಮಹಿಮೆಯನ್ನು ತರುವಂತೆ, ಅರಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟಿದ್ದಾರೆ.</verse>
				<verse number="28">ಅರಸನ ಮುಂದೆಯೂ, ಅವನ ಸಲಹೆಗಾರರ ಮುಂದೆಯೂ, ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆತೋರಿಸಿದ್ದಾರೆ. ಹೀಗೆಯೇ ನನ್ನ ದೇವರಾಗಿರುವ ಯೆಹೋವ ದೇವರ ಹಸ್ತವು ನನ್ನ ಮೇಲೆ ಇದ್ದುದರಿಂದ, ನಾನು ಧೈರ್ಯಗೊಂಡು ಇಸ್ರಾಯೇಲಿನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು,” ಎಂದನು.</verse>
			</chapter>
			<chapter number="8">
				<verse number="1">ಅರಸನಾದ ಅರ್ತಷಸ್ತನ ಆಳಿಕೆಯಲ್ಲಿ ಬಾಬಿಲೋನಿನಿಂದ ನನ್ನ ಸಂಗಡ ಹೊರಟು ಬಂದವರ ಕುಟುಂಬಗಳಲ್ಲಿ ಮುಖ್ಯಸ್ಥರು ಯಾರೆಂದರೆ:</verse>
				<verse number="2">ಫೀನೆಹಾಸನ ವಂಶಜರಲ್ಲಿ ಗೇರ್ಷೋಮನೂ, ಈತಾಮಾರನ ವಂಶಜರಲ್ಲಿ ದಾನಿಯೇಲನೂ; ದಾವೀದನ ವಂಶಜರಲ್ಲಿ ಹಟ್ಟೂಷನೂ.</verse>
				<verse number="3">ಇವನು ಶೆಕನ್ಯನ ವಂಶಜನು. ಪರೋಷಿನ ವಂಶಜರಲ್ಲಿ ಜೆಕರ್ಯನೂ, ಅವನ ಸಂಗಡ ವಂಶಜರಲ್ಲಿ 150 ಮಂದಿ ಗಂಡಸರು.</verse>
				<verse number="4">ಪಹತ್ ಮೋವಾಬನ ವಂಶಜರಲ್ಲಿ ಜೆರಹ್ಯನ ಮಗನಾದ ಎಲಿಹೋಯೇನೈನೂ, ಅವನ ಸಂಗಡ 200 ಮಂದಿ ಗಂಡಸರು.</verse>
				<verse number="5">ಜತ್ತುವಿನ ವಂಶಜರಲ್ಲಿ ಯಹಜಿಯೇಲನ ಮಗನಾದ ಶೆಕನ್ಯನು ಮತ್ತು ಅವನ ಸಂಗಡ 300 ಮಂದಿ ಗಂಡಸರು.</verse>
				<verse number="6">ಅದೀನನ ವಂಶಜರಲ್ಲಿ ಯೋನಾತಾನನ ಮಗ ಏಬೆದನೂ, ಅವನ ಸಂಗಡ 50 ಮಂದಿ ಗಂಡಸರು.</verse>
				<verse number="7">ಏಲಾಮನ ವಂಶಜರಲ್ಲಿ ಅತಲ್ಯನ ಮಗ ಯೆಶಾಯನೂ, ಅವನ ಸಂಗಡ 70 ಮಂದಿ ಗಂಡಸರು.</verse>
				<verse number="8">ಶೆಫಟ್ಯನ ವಂಶಜರಲ್ಲಿ ಮೀಕಾಯೇಲನ ಮಗ ಜೆಬದ್ಯನೂ, ಅವನ ಸಂಗಡ 80 ಮಂದಿ ಗಂಡಸರು.</verse>
				<verse number="9">ಯೋವಾಬನ ವಂಶಜರಲ್ಲಿ ಯೆಹೀಯೇಲನ ಮಗ ಓಬದ್ಯನೂ, ಅವನ ಸಂಗಡ 218 ಮಂದಿ ಗಂಡಸರು.</verse>
				<verse number="10">ಬಾನೀಯ ವಂಶಜರಲ್ಲಿ ಯೋಸಿಫ್ಯನ ಮಗ ಶೆಲೋಮೀತನು ಮತ್ತು ಅವನ ಸಂಗಡ 160 ಮಂದಿ ಗಂಡಸರು.</verse>
				<verse number="11">ಬೇಬೈನ ವಂಶಜರಲ್ಲಿ ಬೆಬಾಯಿಯ ಮಗ ಜೆಕರ್ಯನು; ಅವನ ಸಂಗಡ 28 ಮಂದಿ ಗಂಡಸರು.</verse>
				<verse number="12">ಅಜ್ಗಾದನ ವಂಶಜರಲ್ಲಿ ಹಕ್ಕಾಟಾನನ ಮಗ ಯೋಹಾನಾನನೂ, ಅವನ ಸಂಗಡ 110 ಮಂದಿ ಗಂಡಸರು;</verse>
				<verse number="13">ಅದೋನೀಕಾಮಿನ ವಂಶಜರಲ್ಲಿ ಕಡೇ ಪುತ್ರರಾದ ಎಲೀಫೆಲೆಟ್, ಯೆವಿಯೇಲನು, ಶೆಮಾಯನು ಎಂಬ ಹೆಸರುಳ್ಳವರೂ, ಅವರ ಸಂಗಡ 60 ಮಂದಿ ಗಂಡಸರು;</verse>
				<verse number="14">ಬಿಗ್ವೈ ವಂಶಜರಲ್ಲಿ ಜಕ್ಕೂರನ ಮಗನಾದ ಊತೈ ಮತ್ತು ಅವನ ಸಂಗಡ 70 ಮಂದಿ ಗಂಡಸರು.</verse>
				<verse number="15">ಇವರನ್ನು ನಾನು ಅಹಾವಕ್ಕೆ ಹರಿಯುವ ನದಿಯ ಬಳಿಯಲ್ಲಿ ಕೂಡಿಸಿಕೊಂಡು, ಅಲ್ಲಿ ಮೂರು ದಿವಸ ಡೇರೆಗಳಲ್ಲಿ ವಾಸಿಸಿದ್ದೆವು. ನಾನು ಜನರನ್ನೂ, ಯಾಜಕರನ್ನೂ ಶೋಧಿಸಿ ನೋಡುವಾಗ, ಲೇವಿಯರಲ್ಲಿ ಒಬ್ಬನೂ ಅಲ್ಲಿ ಸಿಕ್ಕಲಿಲ್ಲ.</verse>
				<verse number="16">ಆಗ ನಾನು ಎಲೀಯೆಜೆರನು, ಅರೀಯೇಲನು, ಶೆಮಾಯನು, ಎಲ್ನತಾನನು, ಯಾರೀಬನು, ಎಲ್ನಾತಾನನು, ನಾತಾನನು, ಜೆಕರ್ಯನು, ಮೆಷುಲ್ಲಾಮನು ಎಂಬ ಪ್ರಮುಖರನ್ನೂ, ಯೋಯಾರೀಬನು, ಎಲ್ನತಾನನು ಎಂಬ ಗ್ರಹಿಕೆಯುಳ್ಳವರನ್ನೂ ಕರೆಕಳುಹಿಸಿದೆನು.</verse>
				<verse number="17">ಕಾಸಿಫ್ಯದಲ್ಲಿರುವ ಅಧಿಪತಿಯಾದ ಇದ್ದೋನನ ಬಳಿಗೆ ಅಪ್ಪಣೆಕೊಟ್ಟು ಕಳುಹಿಸಿ, ಅವರು ನಮ್ಮ ದೇವರ ಆಲಯಕ್ಕೋಸ್ಕರ ಸೇವಕರನ್ನು ತರುವ ಹಾಗೆ ಅವರು ಕಸಿಪ್ಯವೆಂಬ ಸ್ಥಳದಲ್ಲಿರುವ ಇದ್ದೋವಿಗೂ, ಅವನ ಸಹೋದರರಾದ ನೆತಿನಿಯರಿಗೂ ಹೇಳಬೇಕಾದದ್ದನ್ನು ತಿಳಿಸಿದೆನು.</verse>
				<verse number="18">ನಮ್ಮ ದೇವರ ಕೃಪಾಹಸ್ತವು ನಮ್ಮ ಮೇಲೆ ಇದ್ದುದರಿಂದ, ಅವರು ಇಸ್ರಾಯೇಲಿನ ಮಗನಾಗಿರುವ ಲೇವಿಯ ಮಗ ಮಹ್ಲೀಯ ಪುತ್ರರಲ್ಲಿ ಬುದ್ಧಿವಂತನಾದ ಶೇರೇಬ್ಯನೂ, ಅವನ ಪುತ್ರರೂ, ಸಹೋದರರೂ ಆದ ಹದಿನೆಂಟು ಮಂದಿಯನ್ನೂ,</verse>
				<verse number="19">ಹಷಬ್ಯನೂ, ಅವನ ಸಂಗಡ ಮೆರಾರೀಯ ಪುತ್ರರಲ್ಲಿ ಯೆಶಾಯನೂ, ಅವನ ಸಹೋದರರೂ, ಅವರ ಪುತ್ರರೂ ಆದ ಇಪ್ಪತ್ತು ಮಂದಿಯನ್ನೂ,</verse>
				<verse number="20">ದಾವೀದನೂ, ಪ್ರಧಾನರೂ, ಲೇವಿಯರನ್ನು ಸೇವಿಸುವುದಕ್ಕೆ ನೇಮಿಸಿದ ದೇವಾಲಯದ ಸೇವಕರಲ್ಲಿ ಇನ್ನೂರ ಇಪ್ಪತ್ತು ಮಂದಿ ಸೇವಕರನ್ನೂ, ನಮ್ಮ ಬಳಿಗೆ ಕರೆದುಕೊಂಡು ಬಂದರು. ಅವರೆಲ್ಲರ ಹೆಸರುಗಳು ದಾಖಲೆಯಾಗಿದ್ದವು.</verse>
				<verse number="21">ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಳ್ಳುವುದಕ್ಕೂ, ನಮಗೂ ನಮ್ಮ ಮಕ್ಕಳಿಗೂ, ನಮ್ಮ ಎಲ್ಲಾ ಸ್ಥಿತಿಗೂ ಅವರಿಂದ ಸರಿಯಾದ ಮಾರ್ಗವನ್ನು ಹುಡುಕುವುದಕ್ಕೂ, ನಾನು ಅಲ್ಲಿ ಅಹಾವ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಪ್ರಕಟಿಸಿದೆನು.</verse>
				<verse number="22">“ನಮ್ಮ ದೇವರ ಕೃಪಾಹಸ್ತವು ಅವರನ್ನು ಹುಡುಕುವವರೆಲ್ಲರ ಮೇಲೆಯೂ ಇದೆ, ಆದರೆ ಅವರ ಕೋಪವು ಅವರನ್ನು ತ್ಯಜಿಸುವ ಎಲ್ಲರ ವಿರುದ್ಧವಾಗಿರುತ್ತದೆ,” ಎಂದು ನಾವು ಅರಸನಿಗೆ ಹೇಳಿದ್ದರಿಂದ, ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಸೈನ್ಯವನ್ನೂ ಅಶ್ವಬಲವನ್ನೂ ಅರಸನಿಂದ ಕೇಳಲು ನಾಚಿಕೆಪಟ್ಟೆವು.</verse>
				<verse number="23">ಆದ್ದರಿಂದ ನಾವು ಉಪವಾಸ ಮಾಡಿ ಇದಕ್ಕೋಸ್ಕರ ನಮ್ಮ ದೇವರನ್ನು ಬೇಡಿಕೊಂಡೆವು. ದೇವರು ನಮ್ಮ ವಿಜ್ಞಾಪನೆಯನ್ನು ಕೇಳಿದರು.</verse>
				<verse number="24">ನಾನು ಯಾಜಕರ ಪ್ರಮುಖರಲ್ಲಿ ಹನ್ನೆರಡು ಮಂದಿಯಾಗಿರುವ ಶೇರೇಬ್ಯ, ಹಷಬ್ಯ ಇವರ ಸಂಗಡ ಅವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಪ್ರತ್ಯೇಕಿಸಿ</verse>
				<verse number="25">ಅರಸನೂ, ಅವನ ಸಲಹೆಗಾರರೂ, ಅವನ ಪ್ರಧಾನರೂ ಅಲ್ಲಿದ್ದ ಎಲ್ಲಾ ಇಸ್ರಾಯೇಲರೂ ನಮ್ಮ ದೇವರ ಆಲಯಕ್ಕೆ ಅರ್ಪಿಸಿದ ಕಾಣಿಕೆಯಾದ ಬೆಳ್ಳಿಯನ್ನೂ, ಬಂಗಾರವನ್ನೂ, ಸಲಕರಣೆಗಳನ್ನೂ ಅವರಿಗೆ ತೂಕಮಾಡಿ ಕೊಟ್ಟೆನು.</verse>
				<verse number="26">ಅವರ ಕೈಗೆ ಕೊಟ್ಟ ಸಲಕರಣೆಗಳ ತೂಕ 22 ಬೆಳ್ಳಿ ಮೆಟ್ರಿಕ್ ಟನ್; ಬೆಳ್ಳಿಯ ನೂರು ಸಾಮಗ್ರಿಗಳ ತೂಕ 3.4 ಮೆಟ್ರಿಕ್ ಟನ್; ಬಂಗಾರ 3.4 ಮೆಟ್ರಿಕ್ ಟನ್.</verse>
				<verse number="27">ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ 8.4 ಕಿಲೋಗ್ರಾಂ, ಇವುಗಳಲ್ಲದೆ ಶ್ರೇಷ್ಠವಾದ ಕಂಚಿನ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು.</verse>
				<verse number="28">ನಾನು ಅವರಿಗೆ, “ನೀವು ಯೆಹೋವ ದೇವರಿಗೆ ಪ್ರತಿಷ್ಠಿತರಾಗಿದ್ದೀರಿ. ಈ ವಸ್ತುಗಳು ಹಾಗೆಯೇ ಪ್ರತಿಷ್ಠಿತವು. ಈ ಬೆಳ್ಳಿ ಬಂಗಾರವು ನಿಮ್ಮ ಪಿತೃಗಳ ದೇವರಾಗಿರುವ ಯೆಹೋವ ದೇವರಿಗೆ ಸಮರ್ಪಿತವಾದ ಕಾಣಿಕೆ.</verse>
				<verse number="29">ನೀವು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯದ ಕೊಠಡಿಗಳೊಳಗೆ ಯಾಜಕರ ಲೇವಿಯರ, ಪ್ರಧಾನರ ಮುಂದೆಯೂ ಇಸ್ರಾಯೇಲ್ ಕುಟುಂಬಗಳ ಪ್ರಧಾನರ ಮುಂದೆಯೂ ತೂಕಮಾಡುವವರೆಗೆ ಜಾಗ್ರತೆಯಾಗಿ ಕಾಪಾಡಿರಿ,” ಎಂದೆನು.</verse>
				<verse number="30">ಹಾಗೆಯೇ ಯಾಜಕರೂ, ಲೇವಿಯರೂ ತೂಕದ ಹಾಗೆ ಬೆಳ್ಳಿಯನ್ನೂ, ಬಂಗಾರವನ್ನೂ, ವಸ್ತುಗಳನ್ನೂ ಯೆರೂಸಲೇಮಿನಲ್ಲಿರುವ ನಮ್ಮ ದೇವರ ಆಲಯಕ್ಕೆ ತೆಗೆದುಕೊಂಡು ಬಂದರು.</verse>
				<verse number="31">ನಾವು ಯೆರೂಸಲೇಮಿಗೆ ಹೋದ ಮೊದಲನೆಯ ತಿಂಗಳ, ಹನ್ನೆರಡನೆಯ ದಿವಸದಲ್ಲಿ ಅಹಾವ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದುದರಿಂದ, ದೇವರು ಶತ್ರುವಿನ ಕೈಗೂ, ಮಾರ್ಗದಲ್ಲಿ ಹೊಂಚುಹಾಕುವವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟರು.</verse>
				<verse number="32">ನಾವು ಯೆರೂಸಲೇಮಿಗೆ ಬಂದು, ಅಲ್ಲಿ ಮೂರು ದಿವಸ ವಿಶ್ರಮಿಸಿಕೊಂಡೆವು.</verse>
				<verse number="33">ತರುವಾಯ ನಾಲ್ಕನೆಯ ದಿವಸದಲ್ಲಿ ಆ ಬೆಳ್ಳಿಯೂ, ಬಂಗಾರವೂ, ಸಲಕರಣೆಗಳೂ ನಮ್ಮ ದೇವರ ಆಲಯದಲ್ಲಿ ಯಾಜಕರಾಗಿರುವ ಊರೀಯನ ಮಗ ಮೆರೇಮೋತನ ಕೈಯಿಂದ ತೂಕಮಾಡಿ ಕೊಟ್ಟೆವು. ಅವನ ಸಂಗಡ ಲೇವಿಯರಾದ ಫೀನೆಹಾಸನ ಮಗನಾಗಿರುವ ಎಲಿಯಾಜರನೂ, ಯೇಷೂವನ ಮಗ ಯೋಜಾಬಾದನೂ, ಬಿನ್ನೂಯ್ ಮಗ ನೋವದ್ಯನೂ ಇದ್ದರು.</verse>
				<verse number="34">ಅದರದರ ಲೆಕ್ಕದ ಪ್ರಕಾರವೂ, ತೂಕದ ಪ್ರಕಾರವೂ ಎಲ್ಲವುಗಳ ತೂಕವು ತಕ್ಷಣವೇ ಲಿಖಿತವಾಯಿತು.</verse>
				<verse number="35">ಸೆರೆಯಿಂದ ಮರಳಿ ಬಂದವರು ಇಸ್ರಾಯೇಲ್ ದೇವರಿಗೆ ದಹನಬಲಿಗಳನ್ನು ಅರ್ಪಿಸಿದರು. ಸಮಸ್ತ ಇಸ್ರಾಯೇಲರಿಗೋಸ್ಕರ ಹನ್ನೆರಡು ಹೋರಿಗಳನ್ನೂ, ತೊಂಬತ್ತಾರು ಟಗರುಗಳನ್ನೂ, ಎಪ್ಪತ್ತೇಳು ಕುರಿಮರಿಗಳನ್ನೂ, ದೋಷಪರಿಹಾರಕ್ಕಾಗಿ ಹನ್ನೆರಡು ಹೋತಗಳನ್ನೂ ಅರ್ಪಿಸಿದರು. ಇವೆಲ್ಲಾ ಯೆಹೋವ ದೇವರಿಗೆ ದಹನಬಲಿಯಾಗಿತ್ತು.</verse>
				<verse number="36">ಅವರು ಅರಸನ ಆಜ್ಞೆಗಳನ್ನು ಯೂಫ್ರೇಟೀಸ್ ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ, ಯಜಮಾನರಿಗೂ ಒಪ್ಪಿಸಿದರು. ಆಗ ಅವರು ಜನರಿಗೂ, ದೇವರ ಆಲಯಕ್ಕೂ ಸಹಾಯ ಮಾಡಿದರು.</verse>
			</chapter>
			<chapter number="9">
				<verse number="1">ಈ ಸಂಗತಿಗಳನ್ನು ಮಾಡಿದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು, “ಇಸ್ರಾಯೇಲರೂ, ಯಾಜಕರೂ, ಲೇವಿಯರೂ ತಮ್ಮ ನೆರೆಯವರಿಂದ ಪ್ರತ್ಯೇಕಿಸಿಕೊಳ್ಳಲಿಲ್ಲ. ಅವರು ಕಾನಾನ್ಯರು, ಹಿತ್ತಿಯರು, ಪೆರಿಜೀಯರು, ಯೆಬೂಸಿಯರು, ಅಮ್ಮೋನ್ಯರು, ಮೋವಾಬ್ಯರು, ಈಜಿಪ್ಟರು, ಅಮೋರಿಯರು ಇವರ ಅಸಹ್ಯ ಸಂಗತಿಗಳ ಪದ್ಧತಿಗಳಂತೆ ನಡೆಯುತ್ತಾ ಇದ್ದಾರೆ.</verse>
				<verse number="2">ಇಸ್ರಾಯೇಲರು ತಮಗೂ, ತಮ್ಮ ಪುತ್ರರಿಗೂ ಅವರ ಪುತ್ರಿಯರನ್ನು ತೆಗೆದುಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ. ನಿಶ್ಚಯವಾಗಿ ಪ್ರಧಾನರು ಮತ್ತು ಅಧಿಕಾರಸ್ಥರು ಈ ಅಪನಂಬಿಗಸ್ತಿಕೆಗೆ ಮುಂದಾಳುಗಳಾದರು,” ಎಂದು ತಿಳಿಸಿದರು.</verse>
				<verse number="3">ನಾನು ಇದನ್ನು ಕೇಳಿದಾಗ ನನ್ನ ವಸ್ತ್ರವನ್ನೂ, ನನ್ನ ನಿಲುವಂಗಿಯನ್ನೂ ಹರಿದು ನನ್ನ ತಲೆಯ ಮತ್ತು ಗಡ್ಡದ ಕೂದಲನ್ನು ಕಿತ್ತು, ಸ್ತಬ್ಧನಾಗಿ ಕುಳಿತುಕೊಂಡೆನು.</verse>
				<verse number="4">ಆಗ ಸೆರೆಯಿಂದ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ, ನನ್ನ ಬಳಿಗೆ ಕೂಡಿಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವವರೆಗೆ ಸ್ತಬ್ಧನಾಗಿ ಕುಳಿತುಕೊಂಡಿದ್ದೆನು.</verse>
				<verse number="5">ಆದರೆ ಸಾಯಂಕಾಲದ ಬಲಿಯನ್ನರ್ಪಿಸುವಾಗ, ನಾನು ನನ್ನ ಶೋಕ ಸ್ಥಿತಿಯಿಂದ ಎದ್ದು, ನನ್ನ ವಸ್ತ್ರವನ್ನೂ, ನನ್ನ ನಿಲುವಂಗಿಯನ್ನೂ ಹರಿದುಕೊಂಡವನಾಗಿ, ನನ್ನ ಮೊಣಕಾಲುಗಳನ್ನೂರಿ, ನನ್ನ ಕೈಗಳನ್ನು ನನ್ನ ದೇವರಾಗಿರುವ ಯೆಹೋವ ದೇವರ ಮುಂದೆ ಚಾಚಿ,</verse>
				<verse number="6">ಪ್ರಾರ್ಥಿಸಿದೆನು: “ನನ್ನ ದೇವರೇ, ನಾನು ನನ್ನ ಮುಖವನ್ನು ನಿಮ್ಮ ಮುಂದೆ ಎತ್ತಲಾರದೆ, ಲಜ್ಜೆಯಿಂದ ನಾಚಿಕೆಪಡುತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಮೀರಿ ಬೆಳೆದಿವೆ. ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.</verse>
				<verse number="7">ನಮ್ಮ ತಂದೆಗಳ ದಿವಸಗಳು ಮೊದಲ್ಗೊಂಡು ಈ ದಿವಸದವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಅನ್ಯದೇಶಗಳ ಅರಸರ ಕೈಗೆ ಸಿಕ್ಕಿಬಿದ್ದೆವು. ನಮ್ಮ ಅಕ್ರಮಗಳಿಗೋಸ್ಕರ ನಾವೂ, ನಮ್ಮ ಅರಸರೂ ನಮ್ಮ ಯಾಜಕರೂ ಖಡ್ಗವೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ.</verse>
				<verse number="8">“ಈಗ ನಮ್ಮ ಯೆಹೋವ ದೇವರೇ, ಸ್ವಲ್ಪ ಹೊತ್ತು ನಮಗೆ ದಯೆತೋರಿ ನಮ್ಮ ದಾಸತ್ವದಿಂದ ನಮಗೆ ಬಿಡುಗಡೆ ಕೊಟ್ಟಿದ್ದೀರಿ. ನಮ್ಮ ಕಣ್ಣುಗಳನ್ನು ಬೆಳಗಿಸಿ, ತಮ್ಮ ಪರಿಶುದ್ಧ ಸ್ಥಾನದಲ್ಲಿ ನೆಲೆಗೊಳಿಸುವಂತೆ ಮಾಡಿದ್ದೀರಿ</verse>
				<verse number="9">ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸಲು ನಮಗೆ ನವಜೀವನ ಕೊಟ್ಟು, ಯೆಹೂದ ಮತ್ತು ಯೆರೂಸಲೇಮಿನಲ್ಲಿ ನಮಗೆ ಸಂರಕ್ಷಣೆಯ ಗೋಡೆ ಸಿಗುವಂತೆ, ಪಾರಸಿಯ ರಾಜರ ಸಮ್ಮುಖದಲ್ಲಿ ನಮಗೆ ದಯೆಯನ್ನು ದಯಪಾಲಿಸಿದ್ದೀರಿ.</verse>
				<verse number="10">“ಆದರೆ ಈಗ ನಮ್ಮ ದೇವರೇ, ಇದರ ತರುವಾಯ ನಾವು ಏನು ಹೇಳೋಣ? ನಿಮ್ಮ ಆಜ್ಞೆಗಳನ್ನು ನಾವು ತೊರೆದಿದ್ದೇವೆ.</verse>
				<verse number="11">ನಿಮ್ಮ ಸೇವಕರಾದ ಪ್ರವಾದಿಗಳ ಮುಖಾಂತರ ನೀವು ಆ ನಿಮ್ಮ ಆಜ್ಞೆಗಳನ್ನು ಕೊಟ್ಟಿದ್ದೀರಿ. ‘ನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು, ಆ ದೇಶಗಳ ಜನರ ಅಶುದ್ಧತ್ವದಿಂದ ಮೈಲಿಗೆಯಾದ ದೇಶವಾಗಿದೆ. ಆ ಜನರು ತಮ್ಮ ಅಸಹ್ಯ ಅಭ್ಯಾಸಗಳಿಂದ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯವರೆಗೂ ತುಂಬಿಸಿದ್ದಾರೆ.</verse>
				<verse number="12">ಆದ್ದರಿಂದ ನೀವು ಪ್ರಬಲವಾಗಿ ದೇಶದ ಸಮೃದ್ಧಿಯನ್ನು ಅನುಭವಿಸಿ, ಅದನ್ನು ನಿಮ್ಮ ಮಕ್ಕಳಿಗೆ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಡುವ ಹಾಗೆ ನೀವು ನಿಮ್ಮ ಪುತ್ರಿಯರನ್ನು ಅವರ ಪುತ್ರರಿಗೆ ಮದುವೆಮಾಡಿಕೊಡಬೇಡಿರಿ. ಅವರ ಪುತ್ರಿಯರನ್ನು ನಿಮ್ಮ ಪುತ್ರರಿಗೆ ತೆಗೆದುಕೊಳ್ಳಬೇಡಿರಿ. ಅವರ ಸಮಾಧಾನವನ್ನೂ, ಅವರ ಮೇಲನ್ನೂ ಹುಡುಕಲೇ ಬೇಡಿರಿ,’ ಎಂದು ದೇವರೇ ನಮಗೆ ಹೇಳಿದಿರಲ್ಲವೇ?</verse>
				<verse number="13">“ನಮ್ಮ ದುಷ್ಕಾರ್ಯ ಹಾಗೂ ನಮ್ಮ ಮಹಾ ಅಪರಾಧಕ್ಕಾಗಿ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ, ನಮ್ಮ ದೇವರಾಗಿರುವ ನೀವು ನಮ್ಮ ಪಾಪಗಳಿಗಿಂತ ಕಡಿಮೆ ಶಿಕ್ಷೆ ನೀಡಿದ್ದೀರಿ ಮತ್ತು ನಮ್ಮಲ್ಲಿ ಈ ರೀತಿಯಾಗಿ ಇಷ್ಟುಮಂದಿಯನ್ನು ಉಳಿಸಿದ್ದೀರಿ.</verse>
				<verse number="14">ನಾವು ನಿಮ್ಮ ಆಜ್ಞೆಗಳನ್ನು ಪುನಃ ಮೀರಿ ಅಸಹ್ಯ ಅಭ್ಯಾಸಕರಾದ ಈ ಜನರ ಸಂಗಡ ವಿವಾಹ ಸಂಬಂಧ ಮಾಡಬಹುದೇ? ಹಾಗೆ ಮಾಡಿದರೆ, ಉಳಿದವರೂ ತಪ್ಪಿಸಿಕೊಂಡವರೂ ಇಲ್ಲದಂತೆ ದಂಡಿಸಲು, ನೀವು ನಮ್ಮ ಮೇಲೆ ಕೋಪಗೊಳ್ಳುವುದು ಯೋಗ್ಯವೇ?</verse>
				<verse number="15">ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರೇ, ನೀವು ನೀತಿವಂತರು! ನಾವು ಇಂದು ತಪ್ಪಿಸಿಕೊಂಡು ಉಳಿದಿದ್ದೇವೆ. ನಾವು ನಮ್ಮ ಅಪರಾಧಗಳ ನಿಮಿತ್ತ ನಿಮ್ಮ ಮುಂದೆ ನಿಲ್ಲಲು ಯೋಗ್ಯರಲ್ಲದಿದ್ದರೂ, ನಮ್ಮ ಅಪರಾಧಗಳೊಂದಿಗೆ ನಿಮ್ಮ ಮುಂದೆ ನಿಂತಿದ್ದೇವೆ,” ಎಂದು ಪ್ರಾರ್ಥನೆಮಾಡಿದೆ.</verse>
			</chapter>
			<chapter number="10">
				<verse number="1">ಎಜ್ರನು ಪ್ರಾರ್ಥಿಸಿ ಅರಿಕೆಮಾಡಿ ಅತ್ತು ದೇವರ ಆಲಯದ ಮುಂದೆ ಅಡ್ಡಬಿದ್ದ ತರುವಾಯ ಇಸ್ರಾಯೇಲರಲ್ಲಿ ಸ್ತ್ರೀಯರೂ, ಪುರುಷರೂ, ಮಕ್ಕಳು ಮಹಾಕೂಟವಾಗಿ ಅವನ ಬಳಿಯಲ್ಲಿ ಕೂಡಿಕೊಂಡು ಬಂದರು. ಜನರು ಬಹಳವಾಗಿ ಅತ್ತರು.</verse>
				<verse number="2">ಆಗ ಏಲಾಮನ ವಂಶಜರಲ್ಲಿ ಒಬ್ಬನಾದ ಯೆಹೀಯೇಲನ ಮಗನಾದ ಶೆಕನ್ಯನು ಎಜ್ರನಿಗೆ, “ನಾವು ಅನ್ಯದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡದ್ದರಿಂದ, ನಮ್ಮ ದೇವರಿಗೆ ವಿರೋಧವಾಗಿ ದ್ರೋಹಮಾಡಿದ್ದೇವೆ. ಆದರೂ ಈಗ ಈ ಕಾರ್ಯವನ್ನು ಕುರಿತು ಇಸ್ರಾಯೇಲರಲ್ಲಿ ನಿರೀಕ್ಷೆ ಉಂಟು.</verse>
				<verse number="3">ಆದಕಾರಣ ನಮ್ಮ ಒಡೆಯನಾದ ನಿನ್ನ ಯೋಚನೆಯ ಪ್ರಕಾರವಾಗಿಯೂ, ನಮ್ಮ ದೇವರ ಆಜ್ಞೆಗೆ ಭಯಪಡುವವರ ಯೋಚನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ, ಅವರಿಂದ ಹುಟ್ಟಿದವರನ್ನೂ ಕಳುಹಿಸಿಬಿಡಲು, ಈಗಲೇ ನಮ್ಮ ದೇವರ ಮುಂದೆ ಒಡಂಬಡಿಕೆ ಮಾಡಿಕೊಂಡು, ದೇವರ ನಿಯಮದ ಪ್ರಕಾರ ನಡೆಯೋಣ.</verse>
				<verse number="4">ನೀನು ಏಳು, ಏಕೆಂದರೆ ಈ ಕಾರ್ಯ ನಿನಗೆ ಸಂಬಂಧಿಸಿದೆ. ನಾವು ನಿನ್ನ ಸಂಗಡ ನಿಲ್ಲುತ್ತೇವೆ. ಧೈರ್ಯದಿಂದ ಅದನ್ನು ಮಾಡು,” ಎಂದನು.</verse>
				<verse number="5">ಆಗ ಎಜ್ರನು ಎದ್ದು, ಮಹಾಯಾಜಕರೂ ಲೇವಿಯರೂ ಸಮಸ್ತ ಇಸ್ರಾಯೇಲರೂ ಈ ಮಾತಿನ ಪ್ರಕಾರವಾಗಿ ಮಾಡಲು, ಅವರು ಆಣೆಯಿಡುವ ಹಾಗೆ ಮಾಡಿದನು. ಅವರು ಆಣೆ ಇಟ್ಟರು.</verse>
				<verse number="6">ಆಮೇಲೆ ಎಜ್ರನು ಎದ್ದು ದೇವರ ಆಲಯದ ಮುಂಭಾಗದ ಸ್ಥಳವನ್ನು ಬಿಟ್ಟು, ಎಲ್ಯಾಷೀಬನ ಮಗ ಯೆಹೋಹಾನಾನನ ಕೊಠಡಿಗೆ ಹೋಗಿ, ದುಃಖಿಸುತ್ತಾ ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು. ಏಕೆಂದರೆ ಸೆರೆಯಿಂದ ಯೆರೂಸಲೇಮಿಗೆ ಬಂದಿದ್ದ ಯೆಹೂದ್ಯರ ಅಪನಂಬಿಗಸ್ತಿಕೆಯ ಬಗ್ಗೆ ತುಂಬಾ ದುಃಖಿತನಾಗಿದ್ದನು.</verse>
				<verse number="7">ತರುವಾಯ ಸೆರೆಯಿಂದ ಬಂದವರೆಲ್ಲರೂ ಯೆರೂಸಲೇಮಿಗೆ ಕೂಡಿಬರಬೇಕೆಂದು ಸಮಸ್ತ ಯೆಹೂದ ಮತ್ತು ಯೆರೂಸಲೇಮಿನಲ್ಲಿ ಸಾರಲಾಗಿತ್ತು.</verse>
				<verse number="8">ಇದಲ್ಲದೆ ಯಾವನಾದರೂ ಪ್ರಧಾನರ, ಹಿರಿಯರ ನಿರ್ಣಯದ ಪ್ರಕಾರ ಮೂರು ದಿವಸದಲ್ಲಿ ಬಾರದೆ ಇದ್ದರೆ, ಅವನ ಆಸ್ತಿಯೆಲ್ಲಾ ದಂಡವಾಗಿ ತೆಗೆದುಕೊಳ್ಳಲಾಗುವುದೆಂದೂ, ಅವನು ಸೆರೆಯಿಂದ ಬಂದವರ ಕೂಟದಿಂದ ಬಹಿಷ್ಕೃತನಾಗುವನು ಎಂದೂ ಪ್ರಕಟಿಸಿದರು.</verse>
				<verse number="9">ಆಗ ಯೆಹೂದ ಮತ್ತು ಬೆನ್ಯಾಮೀನಿನ ಮನುಷ್ಯರೆಲ್ಲರೂ ಮೂರು ದಿವಸಗಳೊಳಗೆ ಯೆರೂಸಲೇಮಿನಲ್ಲಿ ಕೂಡಿದರು. ಅದು ಒಂಬತ್ತನೆಯ ತಿಂಗಳ, ಇಪ್ಪತ್ತನೆಯ ದಿವಸವಾಗಿತ್ತು. ಜನರೆಲ್ಲರು ದೇವರ ಆಲಯದ ಬೀದಿಯಲ್ಲಿ ಆ ಕಾರ್ಯಕ್ಕೋಸ್ಕರವೂ, ಮಳೆಗೋಸ್ಕರವೂ ನಡುಗಿ ಕುಳಿತುಕೊಂಡಿದ್ದರು.</verse>
				<verse number="10">ಆಗ ಯಾಜಕನಾದ ಎಜ್ರನು ಎದ್ದು ಅವರಿಗೆ, “ನೀವು ಇಸ್ರಾಯೇಲರ ಅಪರಾಧವನ್ನು ಅಧಿಕವಾಗಿ ಮಾಡಲು, ಅನ್ಯ ಸ್ತ್ರೀಯರನ್ನು ಮದುವೆ ಮಾಡಿಕೊಂಡಿದ್ದರಿಂದ ದ್ರೋಹ ಮಾಡಿದಿರಿ.</verse>
				<verse number="11">ಆದ್ದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಯೆಹೋವ ದೇವರ ಮುಂದೆ ನಿಮ್ಮ ಪಾಪಗಳನ್ನು ಅರಿಕೆಮಾಡಿ, ಅವರ ಚಿತ್ತದ ಪ್ರಕಾರಮಾಡಿ, ಈ ದೇಶದ ಜನರಿಂದಲೂ, ಅನ್ಯ ಸ್ತ್ರೀಯರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ,” ಎಂದನು.</verse>
				<verse number="12">ಆಗ ಸಭೆಯೆಲ್ಲಾ ಉತ್ತರವಾಗಿ ದೊಡ್ಡ ಶಬ್ದದಿಂದ, “ನೀನು ಸರಿಯಾಗಿ ಹೇಳಿದೆ! ನೀನು ಹೇಳಿದ ಪ್ರಕಾರವೇ ನಾವು ಮಾಡಬೇಕು.</verse>
				<verse number="13">ಆದರೆ ಜನರು ಅನೇಕರು. ಇದು ಮಳೆಗಾಲವಾಗಿರುವುದರಿಂದ ಹೊರಗೆ ಇರಲಾರೆವು. ಇದಲ್ಲದೆ ಇದು ಒಂದೆರಡು ದಿನಗಳ ಕೆಲಸವಲ್ಲ. ಏಕೆಂದರೆ ಈ ಕಾರ್ಯದಲ್ಲಿ ನಮ್ಮ ಅಪರಾಧವು ದೊಡ್ಡದು.</verse>
				<verse number="14">ಆದಕಾರಣ ದಯಮಾಡಿ ಸಭೆಯ ಎಲ್ಲಾದರಲ್ಲಿ ನಮ್ಮ ಪ್ರಧಾನರು ನಿಲ್ಲಲಿ. ಈ ಕಾರ್ಯದ ನಿಮಿತ್ತ ನಮ್ಮ ದೇವರ ಕಠಿಣ ಕೋಪವು ನಮ್ಮನ್ನು ಬಿಟ್ಟು ಹೋಗುವವರೆಗೆ, ನಮ್ಮ ಪಟ್ಟಣಗಳಲ್ಲಿ ಯಹೂದ್ಯರಲ್ಲದ ಸ್ತ್ರೀಯರನ್ನು ತೆಗೆದುಕೊಂಡವರು, ನೇಮಿಸಿದ ಕಾಲದಲ್ಲಿ ಬಂದು, ಅವರ ಸಂಗಡ ಪ್ರತಿ ಪಟ್ಟಣದ ಹಿರಿಯರೂ, ಅದರ ನ್ಯಾಯಾಧಿಪತಿಗಳೂ ಇರಲಿ,” ಎಂದರು.</verse>
				<verse number="15">ಆದರೆ ಅಸಾಯೇಲನ ಮಗ ಯೋನಾತಾನ್ ಹಾಗು, ತಿಕ್ವನ ಮಗ ಯಹ್ಜೆಯ ಇದನ್ನು ವಿರೋಧಿಸಿದರು. ಮೆಷುಲ್ಲಾಮನೂ ಲೇವಿಯನಾದ ಶಬ್ಬೆತೈನೂ ಅವರನ್ನು ಬೆಂಬಲಿಸಿದರು.</verse>
				<verse number="16">ಸೆರೆಯಿಂದ ಬಂದವರು ಇದೇ ಪ್ರಕಾರ ಮಾಡಿದರು. ಆದ್ದರಿಂದ ಯಾಜಕ ಎಜ್ರನು, ಕುಟುಂಬಗಳ ಮುಖ್ಯಸ್ಥರನ್ನಾಗಿ ಕುಟುಂಬಕ್ಕೆ ಒಬ್ಬೊಬ್ಬರನ್ನು ಆಯ್ದುಕೊಂಡನು. ಅವರನ್ನು ಹೆಸರು ಹಿಡಿದು ನೇಮಿಸಿದನು. ಈ ಕಾರ್ಯವನ್ನು ಶೋಧಿಸಲು ಹತ್ತನೆಯ ತಿಂಗಳ, ಮೊದಲನೆಯ ದಿವಸದಲ್ಲಿ ಕುಳಿತುಕೊಂಡರು.</verse>
				<verse number="17">ಅನ್ಯ ಸ್ತ್ರೀಯರನ್ನು ಹೊಂದಿದವರೆಲ್ಲರ ಕಾರ್ಯವನ್ನು ಮೊದಲನೆಯ ತಿಂಗಳ, ಮೊದಲನೆಯ ದಿವಸದಲ್ಲಿ ಮುಗಿಸಿದರು.</verse>
				<verse number="18">ಯಾಜಕರ ವಂಶಜರಲ್ಲಿ ಅನ್ಯ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು ಯಾರೆಂದರೆ: ಯೋಚಾದಾಕನ ಮಗ ಯೇಷೂವನು ಮತ್ತು ಅವನ ಸಹೋದರರಲ್ಲಿ: ಮಾಸೇಯನು, ಎಲೀಯೆಜೆರನು, ಯಾರೀಬನು, ಗೆದಲ್ಯನು.</verse>
				<verse number="19">ಇವರು ತಮ್ಮ ಹೆಂಡತಿಯರನ್ನು ಹೊರಡಿಸಿಬಿಡುವೆವೆಂದು ಪ್ರತಿಜ್ಞೆ ಮಾಡಿ, ತಾವು ಅಪರಾಧಸ್ಥರಾದ್ದರಿಂದ ಅಪರಾಧ ಕಳೆಯುವುದಕ್ಕೆ ಮಂದೆಯಿಂದ ತಂದ ಒಂದು ಟಗರನ್ನು ಅರ್ಪಿಸಿದರು.</verse>
				<verse number="20">ಇಮ್ಮೇರನ ವಂಶಜರಲ್ಲಿ: ಹನಾನೀ, ಜೆಬದ್ಯ.</verse>
				<verse number="21">ಹಾರಿಮನ ವಂಶಜರಲ್ಲಿ: ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್, ಉಜ್ಜೀಯ.</verse>
				<verse number="22">ಪಷ್ಹೂರನ ವಂಶಜರಲ್ಲಿ: ಎಲ್ಯೋವೇನೈ, ಮಾಸೇಯ, ಇಷ್ಮಾಯೇಲ್, ನೆತನೆಯೇಲ್, ಯೋಜಾಬಾದ್ ಮತ್ತು ಎಲ್ಲಾಸ.</verse>
				<verse number="23">ಲೇವಿಯರಲ್ಲಿ ಯೋಜಾಬಾದ್, ಶಿಮ್ಮೀ, ಕೆಲೀಟನೆಂಬ ಕೇಲಾಯ, ಪೆತಹ್ಯ, ಯೆಹೂದ, ಎಲೀಯೆಜೆರ್.</verse>
				<verse number="24">ಹಾಡುಗಾರರಲ್ಲಿ: ಎಲ್ಯಾಷೀಬ್. ದ್ವಾರಪಾಲಕರಲ್ಲಿ: ಶಲ್ಲೂಮ್, ಟೆಲೆಮ್, ಊರಿ.</verse>
				<verse number="25">ಇಸ್ರಾಯೇಲರಲ್ಲಿ: ಪರೋಷನ ವಂಶಜರಲ್ಲಿ: ರಮ್ಯಾಹ, ಇಜ್ಜೀಯ, ಮಲ್ಕೀಯ, ಮಿಯಾಮಿನ್, ಎಲಿಯಾಜರ್, ಮಲ್ಕೀಯ, ಬೆನಾಯ.</verse>
				<verse number="26">ಏಲಾಮನ ವಂಶಜರಲ್ಲಿ: ಮತ್ತನ್ಯ, ಜೆಕರ್ಯ, ಯೆಹೀಯೇಲ್, ಅಬ್ದೀ, ಯೆರೀಮೋತ್, ಎಲೀಯ.</verse>
				<verse number="27">ಜತ್ತೂ ವಂಶಜರಲ್ಲಿ: ಎಲ್ಯೋವೇನೈ, ಎಲ್ಯಾಷೀಬ್, ಮತ್ತನ್ಯ, ಯೆರೀಮೋತ್, ಜಾಬಾದ್ ಮತ್ತು ಅಜೀಜಾ.</verse>
				<verse number="28">ಬೇಬೈನ ವಂಶಜರಲ್ಲಿ: ಯೆಹೋಹಾನಾನ್, ಹನನ್ಯ, ಜಬ್ಬೈ, ಅತ್ಲೈ.</verse>
				<verse number="29">ಬಾನೀ ವಂಶಜರಲ್ಲಿ: ಮೆಷುಲ್ಲಾಮ್, ಮಲ್ಲೂಕ್, ಅದಾಯ, ಯಾಷೂಬ್, ಶೆಯಾಲ್ ಮತ್ತು ರಾಮೋತ್.</verse>
				<verse number="30">ಪಹತ್ ಮೋವಾಬಿನ ವಂಶಜರಲ್ಲಿ: ಅದ್ನ, ಕೆಲಾಲ್, ಬೆನಾಯ, ಮಾಸೇಯ, ಮತ್ತನ್ಯ, ಬೆಚಲಯೇಲ್, ಬಿನ್ನೂಯ್, ಮನಸ್ಸೆ.</verse>
				<verse number="31">ಹಾರಿಮನ ವಂಶಜರಲ್ಲಿ: ಎಲೀಯೆಜೆರ್, ಇಷೀಯ, ಮಲ್ಕೀಯ, ಶೆಮಾಯ, ಸಿಮೆಯೋನ್,</verse>
				<verse number="32">ಬೆನ್ಯಾಮೀನ್, ಮಲ್ಲೂಕ್, ಶೆಮರ್ಯ.</verse>
				<verse number="33">ಹಾಷುಮ್ ವಂಶಜರಲ್ಲಿ: ಮತ್ತೆನೈ, ಮತ್ತತ್ತ, ಜಾಬಾದ್, ಎಲೀಫೆಲೆಟ್, ಯೆರೇಮೈ, ಮನಸ್ಸೆ, ಶಿಮ್ಮೀ.</verse>
				<verse number="34">ಬಾನೀ ವಂಶಜರಲ್ಲಿ: ಮಾದೈ, ಅಮ್ರಾಮ್, ಉಯೇಲ್,</verse>
				<verse number="35">ಬೆನಾಯ, ಬೇದೆಯ, ಕೆಲೂಹಿ.</verse>
				<verse number="36">ವನ್ಯಾಹ, ಮೆರೇಮೋತ್, ಎಲ್ಯಾಷೀಬ್,</verse>
				<verse number="37">ಮತ್ತನ್ಯ, ಮತ್ತೆನೈ, ಯಾಸೈ.</verse>
				<verse number="38">ಬಾನೀ, ಬಿನ್ನೂಯ್ ವಂಶಜರಲ್ಲಿ: ಶಿಮ್ಮೀ,</verse>
				<verse number="39">ಶೆಲೆಮ್ಯ, ನಾತಾನ್, ಅದಾಯ,</verse>
				<verse number="40">ಮಕ್ನದೆಬೈ, ಶಾಷೈ, ಶಾರೈ,</verse>
				<verse number="41">ಅಜರಯೇಲ್, ಶೆಲೆಮ್ಯ, ಶೆಮರ್ಯ,</verse>
				<verse number="42">ಶಲ್ಲೂಮ್, ಅಮರ್ಯ, ಯೋಸೇಫ್.</verse>
				<verse number="43">ನೆಬೋ ವಂಶಜರಲ್ಲಿ: ಯೆಹಿಯೇಲ್, ಮತ್ತಿತ್ಯ, ಜಾಬಾದ್, ಜೆಬೀನ, ಯದ್ದೈ, ಯೋಯೇಲ್ ಮತ್ತು ಬೆನಾಯ.</verse>
				<verse number="44">ಇವರೆಲ್ಲರು ಅನ್ಯ ಸ್ತ್ರೀಯರನ್ನು ಮದುವೆಯಾಗಿದ್ದರು. ಇವರಲ್ಲಿ ಕೆಲವರಿಗೆ ಈ ಹೆಂಡತಿಯರಿಂದ ಮಕ್ಕಳಾಗಿದ್ದರು.</verse>
			</chapter>
		</book>
		<book number="16">
			<chapter number="1">
				<verse number="1">ಹಕಲ್ಯನ ಮಗ ನೆಹೆಮೀಯನ ಮಾತುಗಳು: ಇಪ್ಪತ್ತನೆಯ ವರ್ಷದ, ಕಿಸ್ಲೇವ್ ಎಂಬ ಮಾರ್ಗಶಿರ ತಿಂಗಳಲ್ಲಿ ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದೆನು.</verse>
				<verse number="2">ಆಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯನು ಹಾಗೂ ಬೇರೆ ಕೆಲವು ಜನರು ಯೆಹೂದದಿಂದ ನನ್ನ ಬಳಿಗೆ ಬಂದರು. ಸೆರೆ ಹೋದವರಿಂದ ಉಳಿದಿರುವ ಯೆಹೂದ್ಯರ ಮತ್ತು ಯೆರೂಸಲೇಮಿನ ಸಮಾಚಾರವನ್ನು ನಾನು ಅವರಲ್ಲಿ ವಿಚಾರಿಸಿದೆನು.</verse>
				<verse number="3">ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟ ನಿಂದೆಗಳಿಗೆ ಒಳಗಾಗಿದ್ದಾರೆ. ಯೆರೂಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು.</verse>
				<verse number="4">ನಾನು ಈ ಸಮಾಚಾರವನ್ನು ಕೇಳಿದಾಗ, ನೆಲದ ಮೇಲೆ ಕೂತುಕೊಂಡು ಅತ್ತೆನು. ಹಲವಾರು ದಿನಗಳವರೆಗೆ ಶೋಕಿಸಿದೆ, ಉಪವಾಸವಿದ್ದೆ, ಪರಲೋಕ ದೇವರ ಮುಂದೆ ಪ್ರಾರ್ಥನೆ ಮಾಡುತ್ತಾ ಇದ್ದೆ.</verse>
				<verse number="5">ನಾನು ನನ್ನ ಪ್ರಾರ್ಥನೆಯಲ್ಲಿ: “ಪರಲೋಕ ದೇವರಾದ ಯೆಹೋವ ದೇವರೇ, ನೀವು ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿದ್ದೀರಿ. ನಿಮ್ಮನ್ನು ಪ್ರೀತಿಸಿ ನಿಮ್ಮ ಆಜ್ಞೆಗಳಿಗೆ ವಿಧೇಯರಾಗಿರುವವರೊಂದಿಗೆ, ನಿಮ್ಮ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವವರೇ, ಭಯಭಕ್ತಿಗೆ ಪಾತ್ರರಾದ ದೇವರೇ,</verse>
				<verse number="6">ಕೃಪೆಮಾಡಿ ನನಗೆ ಕಿವಿಗೊಡಿರಿ, ಕಟಾಕ್ಷಿಸಿ ನೋಡಿರಿ, ನಿಮ್ಮ ದಾಸನ ಪ್ರಾರ್ಥನೆಯನ್ನು ಆಲಿಸಿರಿ. ನಾನು ಈಗ ಹಗಲಿರುಳೂ ನಿಮ್ಮ ಸನ್ನಿಧಿಯಲ್ಲಿ ನಿಮ್ಮ ದಾಸರಾದ ಇಸ್ರಾಯೇಲರ ಪರವಾಗಿ ಪ್ರಾರ್ಥಿಸುತ್ತಾ ಇದ್ದೇನೆ. ಅವರು ನಿಮಗೆ ವಿರುದ್ಧವಾಗಿ ಮಾಡಿದ ಪಾಪಗಳನ್ನು ಅರಿಕೆಮಾಡುತ್ತಾ ಇದ್ದೇನೆ. ನಾನೂ, ನನ್ನ ಪೂರ್ವಜರೂ ಆ ಪಾಪಗಳಲ್ಲಿ ಪಾಲುಗಾರರು.</verse>
				<verse number="7">ನಾವು ನಿಮಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು. ನೀವು ನಿಮ್ಮ ದಾಸನಾದ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಗೊಳ್ಳಲಿಲ್ಲ.</verse>
				<verse number="8">“ದಯಮಾಡಿ ನಿಮ್ಮ ಸೇವಕನಾದ ಮೋಶೆಗೆ ಹೇಳಿದ ಈ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ. ಮೋಶೆಯ ಮುಖಾಂತರ, ‘ನೀವು ದ್ರೋಹ ಮಾಡಿದರೆ, ನಾನು ನಿಮ್ಮನ್ನು ಜನಾಂಗಗಳ ನಡುವೆ ಚದರಿಸಿಬಿಡುವೆನು.</verse>
				<verse number="9">ಆದರೆ ನೀವು ನನ್ನ ಕಡೆಗೆ ತಿರುಗಿಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ, ಅವುಗಳ ಪ್ರಕಾರ ನಡೆದರೆ, ನಿಮ್ಮಲ್ಲಿರುವವರು ಆಕಾಶದ ಅಂತ್ಯದವರೆಗೂ ಸೆರೆಯಾಗಿ ಹೋಗಿದ್ದರೂ, ನಾನು ಅಲ್ಲಿಂದ ಅವರನ್ನು ಕೂಡಿಸಿ, ನನ್ನ ಹೆಸರನ್ನಿಡಲು ಆಯ್ದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು,’ ಎಂದು ಹೇಳಿದ್ದೀರಿ.</verse>
				<verse number="10">“ಅವರು ನಿಮ್ಮ ಮಹಾಶಕ್ತಿಯಿಂದಲೂ, ನಿಮ್ಮ ಭುಜಪರಾಕ್ರಮಗಳಿಂದ ನೀವು ವಿಮೋಚಿಸಿದ ನಿಮ್ಮ ಸೇವಕರೂ, ನಿಮ್ಮ ಜನರೂ ಆಗಿರುತ್ತಾರೆ.</verse>
				<verse number="11">ದೇವರೇ, ನಿಮ್ಮ ಹೆಸರಲ್ಲಿ ಭಯಭಕ್ತಿಯಿಂದ ಹರ್ಷಿಸುವ ನಿಮ್ಮ ಸೇವಕರ ಪ್ರಾರ್ಥನೆಗೆ ಕಿವಿಗೊಡಿರಿ. ಇಂದು ನಿಮ್ಮ ಸೇವಕನಾದ ನನಗೆ ಯಶಸ್ವಿಯನ್ನು ಕೊಟ್ಟು, ಈ ಅರಸನ ದೃಷ್ಟಿಯಲ್ಲಿ ನನಗೆ ದಯೆ ದೊರಕುವಂತೆ ಮಾಡಿರಿ,” ಎಂದು ಬೇಡಿಕೊಂಡೆನು. ಆ ದಿವಸಗಳಲ್ಲಿ ನಾನು ಅರಸನಿಗೆ ಪಾನ ಸೇವಕನಾಗಿದ್ದೆನು.</verse>
			</chapter>
			<chapter number="2">
				<verse number="1">ಅರಸನಾದ ಅರ್ತಷಸ್ತನ ಇಪ್ಪತ್ತನೆಯ ವರ್ಷದ, ನಿಸಾನ ತಿಂಗಳಲ್ಲಿ, ಅವನ ಮುಂದೆ ದ್ರಾಕ್ಷಾರಸವನ್ನು ತೆಗೆದುಕೊಂಡು ಅರಸನಿಗೆ ಕೊಟ್ಟೆನು. ನಾನು ಅವನ ಸಮ್ಮುಖದಲ್ಲಿ ಹಿಂದೆ ಎಂದೂ ದುಃಖಿತನಾಗಿದ್ದಿಲ್ಲ.</verse>
				<verse number="2">ಆದಕಾರಣ ಅರಸನು ನನಗೆ, “ನಿನಗೆ ಕಾಯಿಲೆ ಇಲ್ಲದೆ ಇರುವಾಗ, ನಿನ್ನ ಮುಖವು ದುಃಖದಿಂದಿರುವುದೇನು? ನಿನಗೆ ರೋಗ ಏನೂ ಇಲ್ಲವಲ್ಲ? ಇದು ಮನೋವೇದನೆಯೇ ಹೊರತು ಬೇರೇನೂ ಅಲ್ಲ,” ಎಂದನು. ಆಗ ನಾನು ಬಹು ಭಯಪಟ್ಟು ಅರಸನಿಗೆ,</verse>
				<verse number="3">“ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು, ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿರುವಾಗ ನನ್ನ ಮುಖವು ದುಃಖವಿಲ್ಲದೆ ಇರಲು ಸಾಧ್ಯವೇ?” ಎಂದು ಹೇಳಿದೆನು.</verse>
				<verse number="4">ಅದಕ್ಕೆ ಅರಸನು ನನಗೆ, “ನಿನಗೆ ಬೇಕಾಗಿರುವುದೇನು?” ಎಂದನು. ಆಗ ನಾನು ಪರಲೋಕದ ದೇವರನ್ನು ಪ್ರಾರ್ಥಿಸಿ</verse>
				<verse number="5">ಅರಸನಿಗೆ, “ಅರಸನಿಗೆ ಮೆಚ್ಚಿಗೆಯಾದರೆ ಮತ್ತು ನಿಮ್ಮ ಸೇವಕನಿಗೆ ನಿಮ್ಮ ಮುಂದೆ ದಯೆ ದೊರಕಿದರೆ, ನನ್ನನ್ನು ನನ್ನ ತಂದೆಗಳ ಸಮಾಧಿಗಳಿರುವ ಪಟ್ಟಣವನ್ನು ಕಟ್ಟಿಸುವುದಕ್ಕಾಗಿ ಯೆಹೂದಕ್ಕೆ ನನ್ನನ್ನು ಕಳುಹಿಸಬೇಕು,” ಎಂದೆನು.</verse>
				<verse number="6">ರಾಣಿಯು ಅವನ ಬಳಿಯಲ್ಲಿ ಕುಳಿತಿರುವಾಗ ಅರಸನು ನನಗೆ, “ನಿನ್ನ ಪ್ರಯಾಣ ಎಷ್ಟು ದಿವಸ? ನೀನು ತಿರುಗಿ ಯಾವಾಗ ಬರುತ್ತೀ?” ಎಂದನು. ನಾನು ಅರಸನಿಗೆ ಸಮಯ ಗೊತ್ತು ಮಾಡಿದೆನು. ಆಗ ಅರಸನು ನನ್ನನ್ನು ಕಳುಹಿಸಲು ಸಮ್ಮತಿಸಿದನು.</verse>
				<verse number="7">ತರುವಾಯ ನಾನು ಅರಸನಿಗೆ, “ಯೂಫ್ರೇಟೀಸ್ ನದಿ ಆಚೆಯ ರಾಜ್ಯಪಾಲರು ತಮ್ಮ ಪ್ರಾಂತಗಳಲ್ಲಿ ಹಾದು, ಯೆಹೂದದ ನಾಡಿಗೆ ಹೋಗುವುದಕ್ಕೆ ನನಗೆ ಅಪ್ಪಣೆ ಕೊಡಬೇಕಾಗುತ್ತದೆ.</verse>
				<verse number="8">ರಾಜವನಪಾಲಕನಾದ ಆಸಾಫನು, ದೇವಾಲಯದ ಕೋಟೆಯ ಬಾಗಿಲುಗಳನ್ನೂ, ಪಟ್ಟಣದ ಪೌಳಿಗೋಡೆಯನ್ನೂ, ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನೂ ಕೊಡಬೇಕಾಗುತ್ತದೆ. ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆನು. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ, ರಾಜನು ಅವುಗಳನ್ನು ನನಗೆ ಕೊಟ್ಟನು.</verse>
				<verse number="9">ಆಗ ನಾನು ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಅಧಿಪತಿಗಳ ಬಳಿಗೆ ಬಂದು, ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು. ಅರಸನು ನನ್ನ ಸಂಗಡ ಸೈನ್ಯಾಧಿಪತಿಗಳನ್ನೂ, ಕುದುರೆ ಸವಾರರನ್ನೂ ಕಳುಹಿಸಿದನು.</verse>
				<verse number="10">ಇಸ್ರಾಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬಾ ವಿಚಲಿತರಾದರು.</verse>
				<verse number="11">ನಾನು ಯೆರೂಸಲೇಮಿಗೆ ಬಂದು ಅಲ್ಲಿ ಮೂರು ದಿವಸ ಇದ್ದ ತರುವಾಯ, ನಾನೂ, ನನ್ನ ಸಂಗಡ ಇರುವ ಕೆಲವರೂ ರಾತ್ರಿಯಲ್ಲಿ ಎದ್ದೆವು.</verse>
				<verse number="12">ಆದರೆ ಯೆರೂಸಲೇಮಿಗೋಸ್ಕರ ಮಾಡಲು ನನ್ನ ದೇವರು ನನ್ನ ಹೃದಯದಲ್ಲಿ ಇಟ್ಟಿದ್ದನ್ನು ಯಾರಿಗೂ ತಿಳಿಸಲಿಲ್ಲ. ನಾನು ಸವಾರಿಮಾಡುತ್ತಿದ್ದ ವಾಹನ ಪಶುವಿನ ಹೊರತು ಬೇರೆ ಪಶು ನನ್ನೊಂದಿಗಿರಲಿಲ್ಲ.</verse>
				<verse number="13">ನಾನು ರಾತ್ರಿಯಲ್ಲಿ ಕಣಿವೆಯ ಬಾಗಿಲಿಂದ ಹೊರಟು, ಸರ್ಪದ ಬಾವಿಯನ್ನು ದಾಟಿ, ತಿಪ್ಪೆ ದಿಬ್ಬೆಯ ಬಾಗಿಲಿಗೆ ಬಂದು, ಯೆರೂಸಲೇಮಿನ ಕೆಡವಿ ಹಾಕಲಾದ ಗೋಡೆಗಳನ್ನೂ, ಬೆಂಕಿಯಿಂದ ಸುಡಲಾದ ಅದರ ಬಾಗಿಲುಗಳನ್ನೂ ಚೆನ್ನಾಗಿ ಕಂಡೆನು.</verse>
				<verse number="14">ಅಲ್ಲಿಂದ ಬುಗ್ಗೆಬಾಗಿಲನ್ನು ಹಾದು, ಅರಸನ ಕೊಳಕ್ಕೆ ಹೋದೆನು. ನನ್ನ ವಾಹನ ಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿಲ್ಲದ್ದರಿಂದ,</verse>
				<verse number="15">ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಯನ್ನು ಪರೀಕ್ಷಿಸಿದೆನು. ಆಮೇಲೆ ಪುನಃ ಕಣಿವೆಯ ಬಾಗಿಲಿನಿಂದ ಮನೆಗೆ ಬಂದೆನು.</verse>
				<verse number="16">ನಾನು ಎಲ್ಲಿ ಹೋದೆನೆಂದೂ, ಏನು ಮಾಡಿದೆನೆಂದೂ ಅಧಿಕಾರಿಗಳು ತಿಳಿಯದೆ ಇದ್ದರು. ಅಲ್ಲಿಯವರೆಗೆ ನಾನು ಯೆಹೂದ್ಯರಿಗಾದರೂ, ಯಾಜಕರಿಗಾದರೂ, ಶ್ರೀಮಂತರಿಗಾದರೂ, ಅಧಿಕಾರಿಗಳಿಗಾದರೂ, ಕೆಲಸ ಮಾಡುವ ಇತರ ಜನರಿಗಾದರೂ ಗೊತ್ತಿರಲಿಲ್ಲ.</verse>
				<verse number="17">ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ? ಯೆರೂಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಯೆರೂಸಲೇಮಿನ ಗೋಡೆಯನ್ನು ಪುನಃ ಕಟ್ಟೋಣ. ಹೀಗೆ ಮಾಡಿದರೆ, ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ.</verse>
				<verse number="18">ಇದಲ್ಲದೆ, ನನ್ನ ದೇವರ ಕೃಪಾಹಸ್ತ ನನ್ನನ್ನು ಹೇಗೆ ನಡೆಸಿತೆಂಬುದನ್ನೂ, ರಾಜನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆ. ಆಗ ಅವರು, “ಬನ್ನಿ, ಪುನಃ ಕಟ್ಟೋಣ,” ಎಂದು ಹೇಳಿ, ಆ ಒಳ್ಳೆಯ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು.</verse>
				<verse number="19">ಆದರೆ ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ಯ ದಾಸನಾದ ಟೋಬೀಯನೂ, ಅರಬಿಯನಾದ ಗೆಷೆಮನೂ ಇದನ್ನು ಕೇಳಿದಾಗ, ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ, “ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರುಗಿಬೀಳುವಿರೋ?” ಎಂದರು.</verse>
				<verse number="20">ಆಗ ನಾನು ಅವರಿಗೆ, “ಪರಲೋಕದ ದೇವರು ನಮಗೆ ಸಫಲತೆ ಅನುಗ್ರಹಿಸುವರು. ಅವರ ಸೇವಕರಾದ ನಾವು ಪುನಃ ಕಟ್ಟುವ ಕಾರ್ಯ ಪ್ರಾರಂಭಿಸುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಯಾವುದೇ ಪಾಲಾದರೂ ಹಕ್ಕಾದರೂ ಐತಿಹಾಸಿಕ ಬಾಧ್ಯತೆಯಾದರೂ ಇರುವುದಿಲ್ಲ,” ಎಂದು ಹೇಳಿದೆನು.</verse>
			</chapter>
			<chapter number="3">
				<verse number="1">ಆಗ ಮಹಾಯಾಜಕನಾದ ಎಲ್ಯಾಷೀಬನೂ, ಅವನ ಕುಟುಂಬದ ಯಾಜಕರೂ ಕುರಿ ಬಾಗಿಲನ್ನು ಕಟ್ಟಿ, ಅದನ್ನು ಪ್ರತಿಷ್ಠಿಸಿ, ಅದಕ್ಕೆ ಕದಗಳನ್ನು ಇಟ್ಟರು. ಅಲ್ಲಿಂದ ಶತ ಗೋಪುರದವರೆಗೆ ಗೋಡೆ ಕಟ್ಟಿ ಅದನ್ನೂ ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಬುರುಜಿನವರೆಗೂ ಕಟ್ಟಿದರು.</verse>
				<verse number="2">ಅಲ್ಲಿಂದ ಆಚೆಗೆ ಕಟ್ಟುತ್ತಿದ್ದವರು ಯೆರಿಕೋವಿನವರು, ನಂತರ ಇಮ್ರಿಯ ಮಗನಾದ ಜಕ್ಕೂರನು.</verse>
				<verse number="3">ಮೀನು ಬಾಗಿಲನ್ನು ಪುನಃ ಕಟ್ಟಿದವರು ಹಸ್ಸೆನಾಹನ ಮನೆಯವರು. ಇವರು ಅದರ ಮೇಲೆ ತೊಲೆಗಳನ್ನಿಟ್ಟು, ಅದಕ್ಕೆ ಬಾಗಿಲು, ತಿರುಗಣಿ ಅಗುಳಿಗಳನ್ನು ಹಚ್ಚಿದರು. ಅಲ್ಲಿಂದ ಮುಂದಕ್ಕೆ ಗೋಡೆಯನ್ನು</verse>
				<verse number="4">ಜೀರ್ಣೋದ್ಧಾರ ಮಾಡಿಸಿದವನು ಊರೀಯನ ಮಗನೂ, ಹಕ್ಕೋಚನ ಮೊಮ್ಮಗನೂ ಆಗಿರುವ ಮೆರೇಮೋತ್; ಆಮೇಲೆ ಬೆರೆಕ್ಯನ ಮಗನೂ, ಮೆಷೇಜಬೇಲನ ಮೊಮ್ಮಗನೂ ಆಗಿರುವ ಮೆಷುಲ್ಲಾಮ್; ಆಚೆಗೆ ಬಾಣನ ಮಗನಾದ ಚಾದೋಕ್,</verse>
				<verse number="5">ಅಲ್ಲಿಂದ ಮುಂದಕ್ಕೆ ತೆಕೋವದವರು ಗೋಡೆಯನ್ನು ದುರಸ್ತಿ ಮಾಡಿಸಿದರು. ಆದರೆ ತೆಕೋವದವರಲ್ಲಿ ಶ್ರೇಷ್ಠರಾದವರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.</verse>
				<verse number="6">ಹಳೆಯದು ಎಂಬ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವರು ಪಾಸೇಹನ ಮಗನಾದ ಯೋಯಾದನೂ, ಬೆಸೋದ್ಯನ ಮಗನಾದ ಮೆಷುಲ್ಲಾಮನೂ, ಇವರು ಅದರ ಮೇಲೆ ತೊಲೆಗಳನ್ನಿಟ್ಟು, ಅದಕ್ಕೆ ಬಾಗಿಲು ತಿರುಗಣಿ ಅಗುಳಿಗಳನ್ನು ಹಚ್ಚಿದರು.</verse>
				<verse number="7">ಅಲ್ಲಿಂದ ಯೂಫ್ರೇಟೀಸ್ ನದಿಯ ರಾಜ್ಯಪಾಲನ ಅಧಿಕಾರದಲ್ಲಿರುವ ಸ್ಥಳಗಳಿಂದ ಗಿಬ್ಯೋನ್ ಮತ್ತು ಮಿಚ್ಪ ಊರುಗಳ, ಗಿಬ್ಯೋನಿನವನಾದ ಮೆಲೆಟ್ಯ, ಮೇರೊನೋತಿನವನಾದ ಯಾದೋನ್ ಇವರೂ, ಜೀರ್ಣೋದ್ಧಾರ ಮಾಡಿದರು.</verse>
				<verse number="8">ಇದರ ಆಚೆಗೆ ಹರ್ಹಯನ ಮಗನಾದ ಅಕ್ಕಸಾಲಿಗರ ಉಜ್ಜೀಯೇಲ್, ಆಮೇಲೆ ಗಾಣಿಗನಾದ ಹನನ್ಯ, ಇವರು ಅಗಲವಾದ ಗೋಡೆಯವರೆಗೂ ಯೆರೂಸಲೇಮನ್ನು ಕಟ್ಟಿ ಭದ್ರಪಡಿಸಿದರು.</verse>
				<verse number="9">ಇದರ ಆಚೆಗೆ ಯೆರೂಸಲೇಮಿನ ಅರೆನಾಡೊಡೆಯನೂ, ಹೂರನ ಮಗನೂ ಆದ ರೆಫಾಯ.</verse>
				<verse number="10">ಇವನ ಮುಂದಕ್ಕೆ ಹರೂಮಫನ ಮಗನಾದ ಯೆದಾಯ, ಇವನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ಆಚೆಗೆ ಹಷಬ್ನೆಯನ ಮಗನಾದ ಹಟ್ಟೂಷ್.</verse>
				<verse number="11">ಗೋಡೆಯ ಇನ್ನೊಂದು ಭಾಗವನ್ನೂ, ಒಲೆ ಬುರುಜನ್ನೂ ಜೀರ್ಣೋದ್ಧಾರ ಮಾಡಿದವರು ಹಾರಿಮನ ಮಗನಾದ ಮಲ್ಕೀಯನೂ, ಪಹತ್ ಮೋವಾಬ್ಯನಾದ ಹಷ್ಷೂಬನೂ</verse>
				<verse number="12">ಇವನ ಸಮೀಪದಲ್ಲಿ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಯೆರೂಸಲೇಮಿನ ಅರೆನಾಡೊಡೆಯನೂ, ಹಲ್ಲೋಹೇಷನ ಮಗನೂ ಆದ ಶಲ್ಲೂಮನೂ, ಅವನ ಕುಮಾರಿಯರೂ.</verse>
				<verse number="13">ತಗ್ಗಿನ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವರು ಹಾನೂನನೂ, ಜಾನೋಹ ಊರಿನವರೂ. ಇವರು ಅದರ ಗೋಡೆಯನ್ನು ಕಟ್ಟಿ, ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿ, ಅಲ್ಲಿಂದ ತಿಪ್ಪೆ ಬಾಗಿಲಿನವರೆಗೂ 450 ಮೀಟರ್ ಗೋಡೆಯನ್ನು ಕಟ್ಟಿದರು.</verse>
				<verse number="14">ತಿಪ್ಪೆ ಬಾಗಿಲನ್ನು ಜೀರ್ಣೋದ್ಧಾರ ಮಾಡಿದವರು ಬೇತ್ ಹಕ್ಕೆರೆಮಿನ ನಾಡೊಡೆಯನೂ, ರೇಕಾಬನ ಮಗನೂ ಆದ ಮಲ್ಕೀಯನೂ, ಇವರು ಅದರ ಗೋಡೆಯನ್ನು ಕಟ್ಟಿ, ಅದಕ್ಕೆ ಕದ ತಿರುಗಣಿ ಅಗುಳಿಗಳನ್ನು ಹಚ್ಚಿದರು.</verse>
				<verse number="15">ಬುಗ್ಗೆಬಾಗಿಲನ್ನು ಜೀರ್ಣೋದ್ಧಾರ ಮಾಡಿದವನು ಮಿಚ್ಪದ ನಾಡೊಡೆಯನೂ, ಕೊಲ್ಹೋಜೆಯ ಮಗನೂ ಆದ ಶಲ್ಲೂನ್, ಇವನು ಅದರ ಗೋಡೆಯನ್ನು ಕಟ್ಟಿ, ಅದಕ್ಕೆ ಮಾಳಿಗೆಯನ್ನು ಹಾಕಿ, ಕದ ತಿರುಗಣಿ ಅಗುಳಿಗಳನ್ನು ಹಚ್ಚಿ, ದಾವೀದನ ನಗರದಿಂದಿಳಿದು ಬರುವ ಸೋಪಾನಗಳ ಈಚೆ ಅರಸನ ತೋಟದ ಬಳಿಯಲ್ಲಿರುವ ಶಿಲೋವ ಕೊಳದ ಗೋಡೆಯನ್ನು ಕಟ್ಟಿದನು.</verse>
				<verse number="16">ಇವನ ಆಚೆ ಎಂದರೆ ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯರ ಠಾಣ ಇವುಗಳವರೆಗೂ ಜೀರ್ಣೋದ್ಧಾರ ಮಾಡಿದವನು ಬೇತ್ ಚೂರಿನ ಅರೆನಾಡೊಡೆಯನೂ, ಅಜ್ಬೂಕನ ಮಗನೂ ಆದ ನೆಹೆಮೀಯನು.</verse>
				<verse number="17">ಇವನ ನಂತರ ಜೀರ್ಣೋದ್ಧಾರ ಮಾಡಿದವರು ಲೇವಿಯರು. ಅವರಲ್ಲಿ ಮೊದಲು ಬಾನೀಯ ಮಗನಾದ ರೆಹೂಮ್, ಇವನ ಸಮೀಪದಲ್ಲಿ ತನ್ನ ನಾಡಿನವರೊಡನೆ ಕಟ್ಟುತ್ತಿದ್ದ ಕೆಯೀಲದ ಅರೆನಾಡೊಡೆಯನಾದ ಹಷಬ್ಯ ಇವರು.</verse>
				<verse number="18">ಇವರ ನಂತರ, ಇವರ ಬಂಧುಗಳಲ್ಲಿ ಕೆಯೀಲದ ಎರಡನೆಯ ಅರೆನಾಡೊಡೆಯನೂ, ಹೇನಾದಾದನ ಮಗನೂ ಆದ ಬಿನ್ನೂಯ್.</verse>
				<verse number="19">ಇವನ ಸಮೀಪದಲ್ಲಿ ಗೋಡೆಯ ಮೂಲೆಯಲ್ಲಿರುವ ಆಯುಧ ಶಾಲೆಗೆ ಹೋಗುವ ಮೆಟ್ಟಿಲು ಎದುರಿಗಿರುವ ಭಾಗವನ್ನು ಮಿಚ್ಪದ ಅಧಿಕಾರಿಯೂ, ಯೇಷೂವನ ಮಗನೂ ಆದ ಏಜೆರನು ಜೀರ್ಣೋದ್ಧಾರ ಮಾಡಿದನು.</verse>
				<verse number="20">ಇವನ ನಂತರ, ಗೋಡೆಯ ಇನ್ನೊಂದು ಭಾಗವನ್ನು ಅಂದರೆ ಮೂಲೆಯಿಂದ ಮಹಾಯಾಜಕನಾದ ಎಲ್ಯಾಷೀಬನ ಮನೆಯ ಬಾಗಿಲಿನವರೆಗೆ ಜಕ್ಕೈಯ ಮಗನಾದ ಬಾರೂಕನು ಉತ್ಸಾಹದಿಂದ ಭದ್ರಪಡಿಸಿದನು.</verse>
				<verse number="21">ಇವನ ನಂತರ, ಗೋಡೆಯ ಇನ್ನೊಂದು ಭಾಗವನ್ನು ಎಂದರೆ ಎಲ್ಯಾಷೀಬನ ಮನೆಯ ಬಾಗಿಲಿನಿಂದ ಅದೇ ಮನೆಯ ಕೊನೆಯವರೆಗೆ ಹಕ್ಕೋಚನ ಮೊಮ್ಮಗನೂ, ಊರೀಯನ ಮಗನೂ ಆದ ಮೆರೇಮೋತನು ಜೀರ್ಣೋದ್ಧಾರ ಮಾಡಿದನು.</verse>
				<verse number="22">ಮುಂದಿನ ಭಾಗವನ್ನು ಜೀರ್ಣೋದ್ಧಾರ ಮಾಡಿದವರು ಸುತ್ತಲಿನ ಪ್ರದೇಶದ ಯಾಜಕರು.</verse>
				<verse number="23">ಇವರ ಆಚೆ, ಬೆನ್ಯಾಮೀನ್ ಹಷ್ಷೂಬರು, ಇವರು ತಮ್ಮ ತಮ್ಮ ಮನೆಗಳಿಗೆ ಎದುರಾಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದರು. ಇವರ ತರುವಾಯ ಅನನ್ಯನ ಮೊಮ್ಮಗನೂ, ಮಾಸೇಯನ ಮಗನೂ ಆದ ಅಜರ್ಯ, ಇವನು ತನ್ನ ಮನೆಯ ಹತ್ತಿರದಲ್ಲಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು.</verse>
				<verse number="24">ಇವನ ಆಚೆ, ಅಜರ್ಯನ ಮನೆಯಿಂದ ಮೂಲೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರ ಮಾಡಿದವನು ಹೇನಾದಾದನ ಮಗನಾದ ಬಿನ್ನೂಯ್.</verse>
				<verse number="25">ಸೆರೆಮನೆಯ ಅಂಗಳದ ಹತ್ತಿರ ಮೇಲಣ ಅರಮನೆಯ ಗೋಡೆಯನ್ನು ಮೀರಿ ಬರುವ ಮೂಲೆ ಬುರುಜಿನ ಎದುರಿನ ಭಾಗವನ್ನು ಊಜೈಯ ಮಗನಾದ ಪಾಲಾಲನೂ, ಇವನ ಆಚೆಯಲ್ಲಿ ಪರೋಷನ ಮಗನಾದ ಪೆದಾಯನೂ ಜೀರ್ಣೋದ್ಧಾರ ಮಾಡಿದರು.</verse>
				<verse number="26">ಆ ಮೂಲೆ ಬುರುಜಿನ ಮತ್ತು ನೀರು ಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಾಲಯದ ಸೇವಕರ ನಿವಾಸ ಸ್ಥಾನವು.</verse>
				<verse number="27">ಆ ದೊಡ್ಡ ಮೂಲೆ ಬುರುಜಿನ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ಜೀರ್ಣೋದ್ಧಾರ ಮಾಡಿದರು.</verse>
				<verse number="28">ಯಾಜಕರು ಕುದುರೆ ಬಾಗಿಲಿನ ಆಚೆ ದಿನ್ನೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಜೀರ್ಣೋದ್ಧಾರ ಮಾಡಿದರು.</verse>
				<verse number="29">ಇವರ ಆಚೆ, ಇಮ್ಮೇರನ ಮಗನಾದ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ಜೀರ್ಣೋದ್ಧಾರ ಮಾಡಿದನು. ಇವನ ಆಚೆ, ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು.</verse>
				<verse number="30">ಇವನ ಆಚೆ ಶೆಲೆಮ್ಯನ ಮಗನಾದ ಹನನ್ಯ, ಗೋಡೆಯ ಇನ್ನೊಂದು ಭಾಗವನ್ನು ಜೀರ್ಣೋದ್ಧಾರ ಮಾಡಿದವನು ಚಾಲಾಫನ ಆರನೆಯ ಮಗನಾದ ಹಾನೂನ್, ಇವನ ಆಚೆ, ಅಂದರೆ ತನ್ನ ಸ್ವಂತ ಕೊಠಡಿಯ ಮುಂದೆ ಬೆರೆಕ್ಯನ ಮಗನಾದ ಮೆಷುಲ್ಲಾಮ್.</verse>
				<verse number="31">ಇನ್ನೂ ಮುಂದಕ್ಕೆ ಅಕ್ಕಸಾಲಿಗರ ಮಲ್ಕೀಯ, ಇವನು ದಂಡು ಕೊಡುವ ಬಾಗಿಲಿನೆದುರಿನಲ್ಲಿರುವ ದೇವಾಲಯದ ಸೇವಕರ ಮತ್ತು ವರ್ತಕರ ಕೇರಿಯವರೆಗೂ ಮೂಲೆಯುಪ್ಪರಿಗೆಯವರೆಗೂ ಜೀರ್ಣೋದ್ಧಾರ ಮಾಡಿದನು.</verse>
				<verse number="32">ಈ ಮೂಲೆಯುಪ್ಪರಿಗೆಗೂ, ಕುರಿ ಬಾಗಿಲಿಗೂ ಮಧ್ಯದಲ್ಲಿದ್ದ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಅಕ್ಕಸಾಲಿಗರು, ವರ್ತಕರು ಇವರೇ.</verse>
			</chapter>
			<chapter number="4">
				<verse number="1">ನಾವು ಗೋಡೆಯನ್ನು ಪುನಃ ಕಟ್ಟುವ ವರ್ತಮಾನವನ್ನು ಸನ್ಬಲ್ಲಟನು ಕೇಳಿದಾಗ, ಅವನು ಕೋಪಗೊಂಡು, ಯೆಹೂದ್ಯರಿಗೆ ಗೇಲಿಮಾಡಿ,</verse>
				<verse number="2">ತಮ್ಮ ಜೊತೆ ಕೆಲಸ ಮಾಡುವವರ ಮುಂದೆಯೂ ಸಮಾರ್ಯದಲ್ಲಿರುವ ಸೈನ್ಯದ ಮುಂದೆಯೂ, “ಈ ಬಲಹೀನರಾದ ಯೆಹೂದ್ಯರು ಮಾಡುವುದೇನು? ಅವರು ತಮ್ಮ ಗೋಡೆಯನ್ನು ಪುನಃ ಕಟ್ಟುತ್ತಾರೆಯೇ? ಬಲಿಯನ್ನು ಅರ್ಪಿಸುವರೋ? ಪಟ್ಟಣವು ಬೆಂಕಿಯಲ್ಲಿ ಸುಟ್ಟುಹೋದಾಗ, ಕಲ್ಲಿನ ತುಂಡುಗಳ ರಾಶಿಯಿಂದ ಕಟ್ಟಡಕ್ಕೆ ಸೂಕ್ತವಾದ ಕಲ್ಲುಗಳನ್ನು ಹೊರತೆಗೆಯಲು ಅವರಿಗೆ ಸಾಧ್ಯವಾಗುತ್ತದೆಯೇ?” ಎಂದು ಹೇಳಿದನು.</verse>
				<verse number="3">ಅವನ ಬಳಿಯಲ್ಲೇ ನಿಂತಿದ್ದ ಅಮ್ಮೋನಿಯನಾದ ಟೋಬೀಯನು, “ಅವರು ಕಟ್ಟುವ ಕಲ್ಲು ಗೋಡೆಯ ಮೇಲೆ ನರಿ ಹಾರಿದರೆ, ಅದು ಬಿದ್ದುಹೋಗುವುದು!” ಎಂದು ಅಣಕಿಸಿದನು.</verse>
				<verse number="4">ನಮ್ಮ ದೇವರೇ, ಆಲಿಸಿರಿ; ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಾರೆ. ನೀವು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ಬರಮಾಡಿ, ಸೆರೆಯ ದೇಶದಲ್ಲಿ ಅವರನ್ನು ಸೂರೆಯಾಗಿ ಒಪ್ಪಿಸಿರಿ.</verse>
				<verse number="5">ಅವರು ಕಟ್ಟುವವರ ಮುಂದೆ ನಿಮ್ಮನ್ನು ಕೆಣಕಿದ್ದರಿಂದ ನೀವು ಅವರ ಅಪರಾಧವನ್ನು ಮುಚ್ಚಬೇಡಿರಿ. ನಿಮ್ಮ ಮುಂದೆ ಇರುವ ಅವರ ಪಾಪಗಳನ್ನು ಅಳಿಸಿಬಿಡಬೇಡಿರಿ ಎಂದು ನಾನು ಪ್ರಾರ್ಥಿಸಿದೆ.</verse>
				<verse number="6">ಹೀಗೆ ನಾವು ಪುನಃ ಗೋಡೆ ಕಟ್ಟುವುದನ್ನು ಮುಂದುವರಿಸಿದೆವು. ಗೋಡೆ ಅರ್ಧ ಎತ್ತರದವರೆಗೂ ಆಯಿತು. ಏಕೆಂದರೆ ಜನರು ಕೆಲಸ ಮಾಡುವುದಕ್ಕೆ ಮನಸ್ಸುಳ್ಳವರಾಗಿದ್ದರು.</verse>
				<verse number="7">ಯೆರೂಸಲೇಮಿನ ಗೋಡೆಯ ದುರಸ್ತಿಕಾರ್ಯ ಮುಂದುವರಿದಿದೆ ಹಾಗು ಅದರ ಸಂದುಗಳು ಮತ್ತೆ ಮುಚ್ಚಿಕೊಳ್ಳುತ್ತಿವೆ ಎಂದು ಸನ್ಬಲ್ಲಟನೂ ಟೋಬೀಯನೂ ಅರಬಿಯರೂ ಅಮ್ಮೋನ್ಯರೂ ಅಷ್ಡೋದ್ಯರೂ ಕೇಳಿದಾಗ ಬಹು ಕೋಪಗೊಂಡರು.</verse>
				<verse number="8">ಅವರು ಯೆರೂಸಲೇಮಿಗೆ ವಿರೋಧವಾಗಿ ಯುದ್ಧ ಮಾಡುವುದಕ್ಕೂ, ಅಭ್ಯಂತರಿಸುವುದಕ್ಕೂ ಬರಲು ಏಕವಾಗಿ ಒಳಸಂಚು ಮಾಡಿದರು.</verse>
				<verse number="9">ಆದರೆ ನಾವು ನಮ್ಮ ದೇವರಿಗೆ ಪ್ರಾರ್ಥನೆಮಾಡಿ, ಅವರಿಗೆ ಎದುರಾಗಿ ರಾತ್ರಿ ಹಗಲು ಕಾವಲು ಇಟ್ಟೆವು.</verse>
				<verse number="10">ಆಗ ಯೆಹೂದದವರು, “ಹೊರೆ ಹೊರುವವರ ಬಲವು ಕುಂದಿಹೋಯಿತು; ಕಲ್ಲುಮಣ್ಣಿನ ರಾಶಿ ಬಹಳವಾಗಿದೆ; ಈ ಗೋಡೆಯನ್ನು ಪುನಃ ಕಟ್ಟುವುದು ನಮ್ಮಿಂದಾಗದು,” ಎಂದರು.</verse>
				<verse number="11">ನಮ್ಮ ವೈರಿಗಳು, “ಅವರು ತಿಳಿಯದ ಹಾಗೆಯೂ, ನೋಡದ ಹಾಗೆಯೂ ನಾವು ಅವರ ನಡುವೆ ಬಂದು, ಅವರನ್ನು ಕೊಂದುಹಾಕಿ, ಕೆಲಸವನ್ನು ನಿಲ್ಲಿಸಿಬಿಡೋಣ,” ಎಂದುಕೊಳ್ಳುತ್ತಿದ್ದರು.</verse>
				<verse number="12">ಅವರ ಬಳಿಯಲ್ಲಿ ವಾಸವಾಗಿರುವ ಯೆಹೂದ್ಯರು ನಮ್ಮ ಬಳಿಗೆ ಬಂದು, “ನೀವು ತಿರುಗಿಕೊಳ್ಳುವ ಎಲ್ಲಾ ಸ್ಥಳಗಳಿಂದ ನಮ್ಮ ಮೇಲೆ ಯುದ್ಧಕ್ಕೆ ಬಂದಾರು,” ಎಂದು ನಮಗೆ ಹತ್ತು ಬಾರಿ ಹೇಳಿದರು.</verse>
				<verse number="13">ಆದಕಾರಣ ನಾನು ಗೋಡೆಯ ಹಿಂದೆ ಇರುವ ತಗ್ಗಿನ ಸ್ಥಳಗಳಲ್ಲಿಯೂ, ಎತ್ತರವಾದ ಸ್ಥಳಗಳಲ್ಲಿಯೂ ಜನರನ್ನು ನಿಲ್ಲಿಸಿದೆನು. ತಮ್ಮ ಖಡ್ಗಗಳನ್ನೂ, ತಮ್ಮ ಈಟಿಗಳನ್ನೂ, ತಮ್ಮ ಬಿಲ್ಲುಗಳನ್ನೂ ಹಿಡಿದುಕೊಂಡಿರುವ ಜನರನ್ನು, ಅವರವರ ವಂಶಗಳ ಪ್ರಕಾರ ನಿಲ್ಲಿಸಿದೆನು.</verse>
				<verse number="14">ನಾನು ಅವರನ್ನು ಸಂದರ್ಶಿಸಿ, ಅವರ ಮುಂದೆ ನಿಂತು ಶ್ರೇಷ್ಠರಿಗೂ, ಅಧಿಕಾರಸ್ಥರಿಗೂ, ಇತರ ಜನರಿಗೂ ಸಂಬೋಧಿಸಿ, “ನೀವು ಅವರಿಗೋಸ್ಕರ ಭಯಪಡಬೇಡಿರಿ. ದೊಡ್ಡವನಾಗಿಯೂ, ಭಯಂಕರನಾಗಿಯೂ ಇರುವ ಯೆಹೋವ ದೇವರನ್ನು ಜ್ಞಾಪಕಮಾಡಿಕೊಂಡು, ನಿಮ್ಮ ಪುತ್ರರಿಗೋಸ್ಕರ, ಪುತ್ರಿಯರಿಗೋಸ್ಕರ, ನಿಮ್ಮ ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ,” ಎಂದೆನು.</verse>
				<verse number="15">ನಿಮ್ಮ ಶತ್ರುಗಳು ಅವರ ಕುತಂತ್ರವು ನಮಗೆ ಗೊತ್ತಾಯಿತೆಂದು ದೇವರು ಅದನ್ನು ವ್ಯರ್ಥ ಮಾಡಿದನೆಂದು ತಿಳಿದುಕೊಂಡರು. ನಮ್ಮನ್ನು ಬಿಟ್ಟುಹೋದರು. ನಾವೆಲ್ಲರು ನಮ್ಮ ನಮ್ಮ ಗೋಡೆಯ ಕೆಲಸಕ್ಕೆ ಮತ್ತೆ ಕೈಹಾಕಿದೆವು.</verse>
				<verse number="16">ಅಂದಿನಿಂದ ನನ್ನ ಸೇವಕರಲ್ಲಿ ಅರ್ಧ ಜನರು ಕೆಲಸದಲ್ಲಿ ನಿರತರಾದರು; ಮಿಕ್ಕ ಅರ್ಧ ಜನರು ಈಟಿಗಳನ್ನೂ, ಗುರಾಣಿಗಳನ್ನೂ, ಬಿಲ್ಲುಗಳನ್ನೂ, ಕವಚಗಳನ್ನೂ ಧರಿಸಿದರು. ಪ್ರಧಾನರು ಗೋಡೆ ಕಟ್ಟುವವರಾದ ಯೆಹೂದ ಮನೆಯವರ ಹಿಂದೆ ನಿಂತರು.</verse>
				<verse number="17">ಹೊರೆ ಹೊರುವವರು ಒಂದು ಕೈಯಿಂದ ಹೊರೆಹೊತ್ತು, ಇನ್ನೊಂದು ಕೈಯಿಂದ ಈಟಿ ಹಿಡಿದುಕೊಳ್ಳುತ್ತಾ ಇದ್ದರು.</verse>
				<verse number="18">ಕಟ್ಟುವವರಲ್ಲಿ ಪ್ರತಿಯೊಬ್ಬರೂ ತಮ್ಮ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡು ಕಟ್ಟುತ್ತಿದ್ದರು. ತುತೂರಿ ಊದುವವನು ನನ್ನ ಬಳಿಯಲ್ಲಿದ್ದನು.</verse>
				<verse number="19">ಆಗ ನಾನು ಶ್ರೇಷ್ಠರಿಗೂ, ಅಧಿಕಾರಿಗಳಿಗೂ, ಇತರ ಜನರಿಗೂ, “ಕೆಲಸವು ದೊಡ್ಡದೂ, ವಿಸ್ತಾರವೂ ಆದದ್ದು. ನಾವು ಗೋಡೆಯ ಮೇಲೆ ಚದರಿ, ಒಬ್ಬರಿಗೊಬ್ಬರು ದೂರವಾಗಿದ್ದೇವೆ.</verse>
				<verse number="20">ನಿಮಗೆ ಕೊಂಬಿನ ಧ್ವನಿಯು ಯಾವ ಸ್ಥಳದಿಂದ ಕೇಳಿಬರುವುದೋ, ಆ ಸ್ಥಳಕ್ಕೆ ನಮ್ಮ ಹತ್ತಿರ ಕೂಡಿಬನ್ನಿರಿ. ನಮ್ಮ ದೇವರು ನಮಗೋಸ್ಕರ ಯುದ್ಧಮಾಡುವರು,” ಎಂದು ಹೇಳಿದೆನು.</verse>
				<verse number="21">ಹೀಗೆ ನಾವು ಅರುಣೋದಯದಿಂದ ನಕ್ಷತ್ರಗಳು ಮೂಡುವವರೆಗೂ ಕೆಲಸ ಮಾಡುತ್ತಿದ್ದೆವು. ನನ್ನ ಸೇವಕರಲ್ಲಿ ಅರ್ಧಮಂದಿ ಭರ್ಜಿ ಹಿಡಿದುಕೊಂಡಿದ್ದರು.</verse>
				<verse number="22">ಇದಲ್ಲದೆ ನಾನು ಆ ಸಮಯದಲ್ಲಿ ಜನರಿಗೆ, “ನಿಮ್ಮ ಆಳುಗಳು ರಾತ್ರಿಯಲ್ಲಿ ನಮಗೆ ಕಾವಲಾಗಿರುವಂತೆಯೂ, ಹಗಲಿನಲ್ಲಿ ಕೆಲಸ ನಡೆಸುವಂತೆಯೂ ನೀವು ನಿಮ್ಮ ನಿಮ್ಮ ಆಳುಗಳೊಡನೆ ಯೆರೂಸಲೇಮಿನಲ್ಲೇ ವಾಸಮಾಡಬೇಕು,” ಎಂದು ಅಪ್ಪಣೆ ಮಾಡಿದೆನು.</verse>
				<verse number="23">ನಾನೂ, ನನ್ನ ಸಹೋದರರೂ, ಸೇವಕರೂ, ಮೈಗಾವಲಿನವರೂ ಸ್ನಾನದ ಸಮಯದಲ್ಲಿ ಹೊರತು, ಬೇರೆ ಸಮಯದಲ್ಲಿ ನಮ್ಮ ವಸ್ತ್ರಗಳನ್ನು ತೆಗೆದುಹಾಕಲಿಲ್ಲ.</verse>
			</chapter>
			<chapter number="5">
				<verse number="1">ತರುವಾಯ ಜನರೂ, ಅವರ ಹೆಂಡತಿಯರೂ ತಮ್ಮ ಸಹೋದರರಾದ ಯೆಹೂದ್ಯರ ವಿರುದ್ಧ ಬಹಳ ಗೋಳಾಡ ತೊಡಗಿದರು.</verse>
				<verse number="2">ಅವರಲ್ಲಿ ಕೆಲವರು, “ನಾವೂ, ನಮ್ಮ ಪುತ್ರರೂ, ನಮ್ಮ ಪುತ್ರಿಯರೂ ಅನೇಕರಾದುದರಿಂದ ನಾವು ಬದುಕುವ ಹಾಗೆ ಧಾನ್ಯವನ್ನು ತೆಗೆದುಕೊಳ್ಳೋಣ,” ಎಂದರು.</verse>
				<verse number="3">ಕೆಲವರು, “ಈ ಬರಗಾಲದಲ್ಲಿ ನಾವು ಧಾನ್ಯ ಕೊಂಡುಕೊಳ್ಳುವ ಹಾಗೆ ನಮ್ಮ ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ, ಮನೆಗಳನ್ನೂ ಒತ್ತೆ ಇಟ್ಟೆವು,” ಎಂದರು.</verse>
				<verse number="4">ಇನ್ನು ಕೆಲವರು, “ಅರಸನಿಗೆ ತೆರಿಗೆಯನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ, ನಮ್ಮ ದ್ರಾಕ್ಷಿತೋಟಗಳ ಮೇಲೆಯೂ ಸಾಲವನ್ನು ತೆಗೆದುಕೊಳ್ಳಬೇಕಾಯಿತು.</verse>
				<verse number="5">ನಾವು ನಮ್ಮ ಸಹೋದರರ ಹಾಗೆಯೇ ಒಂದೇ ರಕ್ತಮಾಂಸದವರಾಗಿದ್ದೇವೆ; ನಮ್ಮ ಮಕ್ಕಳು ಅವರ ಮಕ್ಕಳ ಹಾಗೆಯೇ ಕ್ಷೇಮವಾಗಿದ್ದಾರೆ; ಆದರೂ ನಮ್ಮ ಪುತ್ರಪುತ್ರಿಯರನ್ನೂ ಗುಲಾಮರಾಗುವುದಕ್ಕೆ ತಂದಿದ್ದೇವೆ. ನಮ್ಮ ಪುತ್ರಿಯರಲ್ಲಿ ಕೆಲವರು ಆಗಲೇ ಗುಲಾಮರಾಗಿದ್ದಾರೆ. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಏಕೆಂದರೆ ನಮ್ಮ ಹೊಲಗಳೂ, ದ್ರಾಕ್ಷಿ ತೋಟಗಳೂ ಪರರ ಪಾಲಾಗಿವೆ,” ಎಂದರು.</verse>
				<verse number="6">ಅವರ ಕೂಗನ್ನೂ, ಈ ಆರೋಪಗಳನ್ನೂ ನಾನು ಕೇಳಿ ಬಹಳವಾಗಿ ಕೋಪಿಸಿಕೊಂಡೆನು.</verse>
				<verse number="7">ನಾನು ತುಸು ಆಲೋಚಿಸಿ ನೋಡಿದೆ. ಬಳಿಕ ಶ್ರೇಷ್ಠರನ್ನೂ, ಅಧಿಕಾರಿಗಳನ್ನೂ ಖಂಡಿಸಿ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದು ಸರಿಯೇ?” ಎಂದು ಹೇಳಿ ಅವರೊಡನೆ ಬಹಳವಾಗಿ ವಾಗ್ವಾದಿಸಿ, ಅವರಿಗೆ ವಿರೋಧವಾಗಿ ಮಹಾ ಸಭೆಯನ್ನು ಕೂಡಿಸಿದೆ.</verse>
				<verse number="8">“ಇತರ ಜನರಿಗೆ ಗುಲಾಮರಾಗಿ ಮಾರಟವಾಗಿರುವ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿಯಿದ್ದಷ್ಟು ಬಿಡಿಸುತ್ತಿದ್ದೆವು. ಆದರೆ ಈಗ ನೀವು ನಿಮ್ಮ ಸಹೋದರರನ್ನೇ ಮಾರಿಬಿಡುತ್ತಿದ್ದೀರಿ. ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು?” ಎಂದೆನು. ಆಗ ಅವರು ಹೇಳಲು ಏನೂ ಸಿಗದ ಕಾರಣ ಅವರು ಮೌನವಾಗಿದ್ದರು.</verse>
				<verse number="9">ನಾನು ಅವರಿಗೆ, “ನೀವು ಮಾಡುವುದು ಒಳ್ಳೆಯದಲ್ಲ. ಇತರ ದೇಶದವರಾದ ನಮ್ಮ ಶತ್ರುಗಳ ನಿಂದೆಗೆ ಗುರಿಯಾಗದಂತೆ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲವೇ.</verse>
				<verse number="10">ನಾನು, ನನ್ನ ಸಹೋದರರು, ಸೇವಕರು ಸಹ ಅವರಿಗೆ ಹಣವನ್ನೂ, ಧಾನ್ಯವನ್ನೂ ಸಾಲವಾಗಿ ಕೊಟ್ಟಿದ್ದೇವೆ. ಬಡ್ಡಿ ತೆಗೆದುಕೊಳ್ಳುವ ಪದ್ಧತಿಯನ್ನು ಬಿಟ್ಟುಬಿಡೋಣ.</verse>
				<verse number="11">ಅವರ ಹೊಲ, ದ್ರಾಕ್ಷಿತೋಟ, ಓಲಿವ್ ಎಣ್ಣೆಮರಗಳ ತೋಪು, ಮನೆ ಇವುಗಳನ್ನು ಹಿಂದಕ್ಕೆ ಕೊಟ್ಟು ಬಿಡಿ; ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೆ ಶೇಕಡಾ ಇಷ್ಟೆಂದು ವಸೂಲಿ ಮಾಡುವ ಹಕ್ಕನ್ನೂ ಕೂಡ ದಯವಿಟ್ಟು ಈ ದಿನವೇ ರದ್ದುಗೊಳಿಸಿ,” ಎಂದು ಹೇಳಿದೆ.</verse>
				<verse number="12">ಅದಕ್ಕವರು, “ನಾವು ಹಿಂದಕ್ಕೆ ಕೊಡುತ್ತೇವೆ. ಅವರಿಂದ ಏನೂ ಕೇಳುವುದಿಲ್ಲ. ನೀನು ಹೇಳಿದ ಹಾಗೆ ಮಾಡುತ್ತೇವೆ,” ಎಂದರು. ಆಗ ನಾನು ಯಾಜಕರನ್ನು ಕರೆದು, ಅವರು ಈ ಮಾತಿನ ಪ್ರಕಾರ ಮಾಡುವ ಹಾಗೆ ಅವರಿಂದ ಪ್ರಮಾಣವನ್ನು ತೆಗೆದುಕೊಂಡೆನು.</verse>
				<verse number="13">ನಾನು ನನ್ನ ಬಟ್ಟೆಯನ್ನು ಝಾಡಿಸಿ, “ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಅವನ ಆಸ್ತಿಪಾಸ್ತಿಯಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಿ, ಬರಿದಾಗಲಿ,” ಎಂದೆನು. ಅದಕ್ಕೆ ಸಭೆಯವರೆಲ್ಲರೂ, “ಆಮೆನ್” ಎಂದು ಹೇಳಿ ಯೆಹೋವ ದೇವರನ್ನು ಸ್ತುತಿಸಿದರು. ಜನರು ತಾವು ಕೊಟ್ಟ ಮಾತಿನ ಪ್ರಕಾರ ನಡೆದುಕೊಂಡರು.</verse>
				<verse number="14">ಇದಲ್ಲದೆ ನಾನು ಯೆಹೂದ ದೇಶದಲ್ಲಿ ಅವರ ರಾಜ್ಯಪಾಲನಾದ ಕಾಲ ಮೊದಲ್ಗೊಂಡು ಅರಸನಾದ ಅರ್ತಷಸ್ತನ ಇಪ್ಪತ್ತನೆಯ ವರ್ಷ ಮೊದಲ್ಗೊಂಡು ಮೂವತ್ತೆರಡನೆಯ ವರ್ಷದವರೆಗೆ ಹನ್ನೆರಡು ವರ್ಷವಾಗಿ ನಾನೂ, ನನ್ನ ಸಹೋದರರೂ ರಾಜ್ಯಪಾಲನಿಗೆ ಸಲ್ಲತಕ್ಕ ಆಹಾರವನ್ನು ತಿನ್ನಲಿಲ್ಲ.</verse>
				<verse number="15">ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು, ನಾಲ್ವತ್ತು ಬೆಳ್ಳಿನಾಣ್ಯ ಮೌಲ್ಯದ ರೊಟ್ಟಿಯನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು. ಅವರ ಸೇವಕರು ಸಹ ಜನರ ಮೇಲೆ ದೊರೆತನ ನಡೆಸುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹಾಗೆ ಮಾಡಲಿಲ್ಲ.</verse>
				<verse number="16">ಆ ಗೋಡೆ ಕಟ್ಟುವುದರಲ್ಲೇ ನಿರತನಾಗಿದ್ದೆ ಮತ್ತು ನನ್ನ ಎಲ್ಲಾ ಸೇವಕರು ಪ್ರತಿದಿನ ಆ ಕೆಲಸಕ್ಕೆ ಬರುವಂತೆ ನೋಡುತ್ತಿದ್ದೆ. ನಾವು ಅಲ್ಲಿ ಭೂಮಿಯನ್ನು ಸಂಪಾದಿಸಿಕೊಂಡಿರಲಿಲ್ಲ.</verse>
				<verse number="17">ನಮ್ಮ ಸುತ್ತಲೂ ಇರುವ ಜನಾಂಗಗಳಿಂದ ಬಂದವರೂ, ಯೆಹೂದ್ಯರೂ, ಅಧಿಕಾರಿಗಳೂ ನೂರ ಐವತ್ತು ಮಂದಿ ನನ್ನ ಪಂಕ್ತಿಯಲ್ಲೇ ಊಟಮಾಡುತ್ತಿದ್ದರು.</verse>
				<verse number="18">ಪ್ರತಿದಿನಕ್ಕೆ ಒಂದು ಎತ್ತು, ಉತ್ತಮವಾದ ಆರು ಕುರಿಗಳು, ಕೋಳಿಗಳು, ಹತ್ತು ದಿವಸಕ್ಕೆ ಒಂದು ಸಾರಿ ಸಕಲ ವಿಧವಾದ ದ್ರಾಕ್ಷಾರಸವು ನನಗೋಸ್ಕರ ಸಿದ್ಧವಾಗುತ್ತಿದ್ದವು. ಆದರೆ ಈ ಜನರ ಮೇಲೆ ಇದ್ದ ದಾಸತ್ವ ಭಾರವಾಗಿದ್ದುದರಿಂದ ನಾನು ರಾಜ್ಯಪಾಲನಿಗೆ ಸಲ್ಲತಕ್ಕ ಆಹಾರವನ್ನು ಬೇಡಲಿಲ್ಲ.</verse>
				<verse number="19">“ನನ್ನ ದೇವರೇ, ನಾನು ಈ ಜನರಿಗೆ ಮಾಡಿದ ಎಲ್ಲವನ್ನು ನೆನಪು ಮಾಡಿಕೊಂಡು ನನಗೆ ಒಳಿತನ್ನು ಮಾಡಿರಿ,” ಎಂದು ಪ್ರಾರ್ಥಿಸಿದೆ.</verse>
			</chapter>
			<chapter number="6">
				<verse number="1">ನಾನು ಹೆಬ್ಬಾಗಿಲುಗಳಲ್ಲಿ ಬಾಗಿಲುಗಳನ್ನು ಇಡುವುದಕ್ಕಿಂತ ಮುಂಚೆ ನಾನು ಗೋಡೆಯಲ್ಲಿ ಒಂದು ಸಂದನ್ನೂ ಬಿಡದೆ ಪುನಃ ಕಟ್ಟಿದೆನೆಂದು ಸನ್ಬಲ್ಲಟನೂ, ಟೋಬೀಯನೂ, ಅರಬಿಯನಾದ ಗೆಷೆಮನೂ, ಮಿಕ್ಕಾದ ನಮ್ಮ ಶತ್ರುಗಳೂ ಕೇಳಿದಾಗ,</verse>
				<verse number="2">ಸನ್ಬಲ್ಲಟನೂ, ಗೆಷೆಮನೂ ನನಗೆ, “ಓನೋ ಎಂಬ ಬಯಲಿನಲ್ಲಿರುವ ಗ್ರಾಮಗಳಲ್ಲಿ ಎದುರುಗೊಳ್ಳೋಣ ಬಾ,” ಎಂದರು. ಆದರೆ ಅವರು ನನಗೆ ಕೇಡು ಮಾಡಲು ಯೋಜಿಸಿಕೊಂಡಿದ್ದರು.</verse>
				<verse number="3">ಆದಕಾರಣ ನಾನು ಅವರ ಬಳಿಗೆ ದೂತರನ್ನು ಕಳುಹಿಸಿ, “ನಾನು ದೊಡ್ಡ ಕಾರ್ಯವನ್ನು ಮಾಡುತ್ತಾ ಇದ್ದೇನೆ, ಬರಲಾರೆನು. ನಾನು ಅದನ್ನು ಬಿಟ್ಟು ನಿಮ್ಮ ಬಳಿಗೆ ಬಂದರೆ ಕೆಲಸವು ನಿಂತುಹೋಗುವುದು,” ಎಂದು ಹೇಳಿದೆನು.</verse>
				<verse number="4">ಅವರು ಈ ಪ್ರಕಾರ ನಾಲ್ಕು ಸಾರಿ ನನ್ನ ಬಳಿಗೆ ಕಳುಹಿಸಿದರು. ನಾನು ಅದೇ ಪ್ರಕಾರ ಉತ್ತರ ಕಳುಹಿಸಿದೆನು.</verse>
				<verse number="5">ಐದನೆಯ ಸಾರಿ ಸನ್ಬಲ್ಲಟನು ತನ್ನ ದೂತನ ಕೈಯಲ್ಲಿ ಮುಚ್ಚದಿದ್ದ ಒಂದು ಪತ್ರವನ್ನು ಕಳುಹಿಸಿದನು.</verse>
				<verse number="6">ಅದರಲ್ಲಿ ಹೀಗೆ ಬರೆದಿತ್ತು: “ಗೆಷೆಮ್ ಎಂಬವನು ನನಗೆ ತಿಳಿಸಿದ ಪ್ರಕಾರ ನೀನೂ, ಯೆಹೂದ್ಯರೂ ತಿರುಗಿಬೀಳಲು ಯೋಚಿಸುತ್ತೀರಿ. ಆದಕಾರಣ ಈ ಮಾತುಗಳ ಪ್ರಕಾರ ನೀನು ಅವರಿಗೆ ಅರಸನಾಗಿರುವ ಹಾಗೆ ಗೋಡೆಯನ್ನು ಪುನಃ ಕಟ್ಟಿಸುತ್ತಿದ್ದೀ.</verse>
				<verse number="7">ಇದಲ್ಲದೆ, ಯೆಹೂದದಲ್ಲಿ ಅರಸನು ಇದ್ದಾನೆಂದೂ ಯೆರೂಸಲೇಮಿನಲ್ಲಿ ನಿನ್ನನ್ನು ಕುರಿತು ಕೂಗುವುದಕ್ಕೆ ನೀನು ಪ್ರವಾದಿಗಳನ್ನು ನೇಮಿಸಿದ್ದಿ ಎಂಬುದಾಗಿಯೂ ಜನಾಂಗಗಳಲ್ಲಿ ಸುದ್ದಿ ಉಂಟು. ಈಗ ಈ ವರ್ತಮಾನ ಅರಸನಿಗೆ ತಿಳಿಸಲಾಗುವುದು. ಆದಕಾರಣ ನಾವು ಕೂಡಿಕೊಂಡು ಯೋಚನೆ ಮಾಡಿಕೊಳ್ಳೋಣ ಬಾ.”</verse>
				<verse number="8">ಆಗ ನಾನು, “ನೀನು ಹೇಳಿದ ಕಾರ್ಯಗಳಲ್ಲಿ ಯಾವುದೂ ಮಾಡಿದ್ದಿಲ್ಲ. ನೀವು ಅವುಗಳನ್ನು ನಿನ್ನ ಸ್ವಂತ ಹೃದಯದಲ್ಲಿ ಕಲ್ಪಿಸಿಕೊಂಡಿರುವೆ,” ಎಂದು ಹೇಳಿ ಕಳುಹಿಸಿದೆನು.</verse>
				<verse number="9">ಹೀಗೆ, “ಅವರ ಕೈಗಳು ಬಲಹೀನವಾಗುವುವು. ಕೆಲಸವು ಪೂರ್ತಿಯಾಗುವುದಿಲ್ಲ,” ಎಂದುಕೊಂಡು ಅವರೆಲ್ಲರು ನಮ್ಮನ್ನು ಭಯಪಡಿಸಿದರು. ನಾನಾದರೋ, “ದೇವರೇ, ನನ್ನ ಕೈಗಳನ್ನು ಬಲಪಡಿಸಿರಿ,” ಎಂದು ಪ್ರಾರ್ಥಿಸಿದೆನು.</verse>
				<verse number="10">ತರುವಾಯ ನಾನು ಅಡಗಿಕೊಂಡಿದ್ದ ಮೆಹೇಟಬೇಲನ ಮಗನಾದ ದೆಲಾಯ, ಇವನ ಮಗನಾದ ಶೆಮಾಯನ ಮನೆಗೆ ಬಂದೆನು. ಅವನು, “ನಾವಿಬ್ಬರೂ ದೇವರ ಆಲಯದಲ್ಲಿ ಪವಿತ್ರಸ್ಥಾನದೊಳಗೆ ಹೋಗಿ, ಮಂದಿರದ ಬಾಗಿಲನ್ನು ಮುಚ್ಚಿಕೊಳ್ಳೋಣ ಬಾ, ಏಕೆಂದರೆ ಈ ರಾತ್ರಿಯೇ ನಿನ್ನನ್ನು ಕೊಂದುಹಾಕಲು ಬರುತ್ತಾರೆ,” ಎಂದು ಹೇಳಿದನು.</verse>
				<verse number="11">ಅದಕ್ಕೆ ನಾನು, “ನನ್ನಂಥಾ ಮನುಷ್ಯನು ಓಡಿ ಹೋಗುವನೋ? ನನ್ನಂಥವನು ಬದುಕಬೇಕೆಂದು ದೇವರ ಆಲಯದೊಳಗೆ ಹೋಗಬಹುದೇ? ನಾನು ಒಳಗೆ ಹೋಗುವುದಿಲ್ಲ,” ಎಂದೆನು.</verse>
				<verse number="12">ಆಗ ದೇವರು ಅವನನ್ನು ಕಳುಹಿಸಲಿಲ್ಲ. ಟೋಬೀಯನೂ, ಸನ್ಬಲ್ಲಟನೂ ಶೆಮಾಯನಿಗೆ ಲಂಚಕೊಟ್ಟು, ನನಗೆ ವಿರೋಧವಾಗಿ ಈ ಪ್ರವಾದನೆ ಹೇಳಿಸಿದರೆಂದು ನನಗೆ ಗೊತ್ತಾಯಿತು.</verse>
				<verse number="13">ನಾನು ಭಯಪಟ್ಟು ಹೀಗೆ ಮಾಡಿ ಪಾಪಮಾಡುವಂತೆಯೂ ಅವರು ನನ್ನನ್ನು ನಿಂದಿಸುವುದಕ್ಕೆ ಅಪಕೀರ್ತಿಯ ಕಾರಣವು ಅವರಿಗೆ ಸಿಕ್ಕುವಂತೆಯೂ ಶೆಮಾಯನಿಗೆ ಲಂಚಕೊಟ್ಟಿದ್ದರು.</verse>
				<verse number="14">ನನ್ನ ದೇವರೇ, ನೀವು ಅವರ ಈ ಕಾರ್ಯಗಳ ಪ್ರಕಾರ ಟೋಬೀಯನನ್ನೂ, ಸನ್ಬಲ್ಲಟನನ್ನೂ, ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮುಂತಾದ ಪ್ರವಾದಿಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.</verse>
				<verse number="15">ಹೀಗೆ ಗೋಡೆಯು ಐವತ್ತೆರಡು ದಿವಸಗಳಲ್ಲಿ ಏಲುಲ್ ತಿಂಗಳದ ಇಪ್ಪತ್ತೈದನೆಯ ದಿವಸದಲ್ಲಿ ಮುಗಿಯಿತು.</verse>
				<verse number="16">ಈ ಸುದ್ದಿ ಸುತ್ತಮುತ್ತಲಿನ ನಮ್ಮ ವಿರೋಧಿಗಳಾದ ಜನಾಂಗಗಳಿಗೆ ಮುಟ್ಟಿತು. ಅವರು ಭಯಭೀತರಾದರು. ಸೊಕ್ಕು ಮುರಿದವರಾಗಿ ಹಾಗೇ ಕುಗ್ಗಿಹೋದರು. ಈ ಕಾರ್ಯ ನಮ್ಮ ದೇವರಿಂದಲೇ ಪೂರ್ಣಗೊಂಡಿತು ಎಂದು ಅವರಿಗೆ ಮನದಟ್ಟಾಯಿತು.</verse>
				<verse number="17">ಹೇಗಿದ್ದರೂ ಆ ದಿವಸಗಳಲ್ಲಿ ಯೆಹೂದದಲ್ಲಿದ್ದ ಶ್ರೇಷ್ಠರು ಟೋಬೀಯನ ಬಳಿಗೆ ಬಹಳ ಪತ್ರಗಳನ್ನು ಕಳುಹಿಸಿದರು. ಟೋಬೀಯನಿಂದ ಉತ್ತರ ಅವರಿಗೆ ಬರುತ್ತಿದ್ದವು.</verse>
				<verse number="18">ಏಕೆಂದರೆ ಅವನು ಆರಹನ ಮಗ ಶೆಕನ್ಯನ ಅಳಿಯನಾದುದರಿಂದ ಅವನ ಮಗ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ತೆಗೆದುಕೊಂಡಿದ್ದರಿಂದಲೂ ಯೆಹೂದದಲ್ಲಿ ಅನೇಕರು ಅವನಿಗೆ ನಂಬಿಗಸ್ತರಾಗಿರುವುದಾಗಿ ಪ್ರಮಾಣ ಮಾಡಿದರು.</verse>
				<verse number="19">ಇದಲ್ಲದೆ ಅವರು ಅವನ ಸತ್ಕಾರ್ಯಗಳನ್ನು ನನ್ನ ಮುಂದೆ ಹೇಳಿ, ನನ್ನ ಕಾರ್ಯಗಳನ್ನು ಅವನಿಗೆ ತಿಳಿಸಿದರು. ಆದರೆ ಟೋಬೀಯನೂ ನನ್ನನ್ನು ಭಯಪಡಿಸುವುದಕ್ಕೆ ಪತ್ರಗಳನ್ನು ಕಳುಹಿಸಿದನು.</verse>
			</chapter>
			<chapter number="7">
				<verse number="1">ನಾನು ಗೋಡೆಯನ್ನು ಪುನಃ ಕಟ್ಟಿಸಿ, ಬಾಗಿಲುಗಳನ್ನು ನಿಲ್ಲಿಸಿ, ತರುವಾಯ ಬಾಗಿಲು ಕಾಯುವವರನ್ನು, ಹಾಡುಗಾರರನ್ನು, ಲೇವಿಯರನ್ನು ನೇಮಿಸಿದೆನು.</verse>
				<verse number="2">ಆಮೇಲೆ ನಾನು ನನ್ನ ಸಹೋದರನಾದ ಹನಾನೀ ಮತ್ತು ಅರಮನೆಯ ಅಧಿಪತಿಯಾದ ಹನನ್ಯ ಇವರಿಗೆ ಯೆರೂಸಲೇಮಿನ ಜವಾಬ್ದಾರಿಕೆಯನ್ನು ಒಪ್ಪಿಸಿದೆನು. ಏಕೆಂದರೆ ಇವನು ಸತ್ಯವಂತನಾಗಿಯೂ, ಅನೇಕರಿಗಿಂತ ಹೆಚ್ಚಾಗಿ ದೇವರಿಗೆ ಭಯಪಡುವವನಾಗಿಯೂ ಇದ್ದನು.</verse>
				<verse number="3">ಆಗ ನಾನು ಅವರಿಗೆ, “ಬಿಸಿಲು ಏರುವುದಕ್ಕಿಂತ ಮೊದಲೇ ಯೆರೂಸಲೇಮಿನ ಬಾಗಿಲುಗಳನ್ನು ತೆರೆಯಬಾರದು. ಇದಲ್ಲದೆ ನೀವು ಸಮೀಪದಲ್ಲಿ ನಿಂತಿರುವಾಗ, ಕದಗಳನ್ನು ಮುಚ್ಚಿ ಅಗುಳಿಗಳನ್ನು ಹಾಕಿರಿ. ಯೆರೂಸಲೇಮಿನ ನಿವಾಸಿಗಳಲ್ಲಿ ಪ್ರತಿ ಮನುಷ್ಯನು ತನ್ನ ಮನೆಗೆ ಎದುರಾಗಿ ಕಾವಲಾಗಿರಲು ನೇಮಿಸಿರಿ,” ಎಂದು ಹೇಳಿದೆನು.</verse>
				<verse number="4">ಪಟ್ಟಣವು ವಿಸ್ತಾರವಾಗಿಯೂ, ದೊಡ್ಡದಾಗಿಯೂ ಇತ್ತು. ಆದರೆ ಅದರಲ್ಲಿರುವ ಜನರು ಕೊಂಚವಾಗಿದ್ದರು. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.</verse>
				<verse number="5">ತರುವಾಯ ಅವರು ವಂಶಾವಳಿಯಿಂದ ಲೆಕ್ಕಿಸುವ ಹಾಗೆ ಶ್ರೇಷ್ಠರನ್ನೂ, ಅಧಿಕಾರಸ್ಥರನ್ನೂ, ಸಾಮಾನ್ಯ ಜನರನ್ನೂ ಸಭೆಯಾಗಿಸೇರಲು, ನನ್ನ ದೇವರು ನನ್ನ ಹೃದಯದಲ್ಲಿ ಪ್ರೇರೇಪಿಸಿದರು. ಆಗ ನಾನು ಮೊದಲು ಬಂದವರ ವಂಶಾವಳಿಯ ಪಟ್ಟಿಯನ್ನು ಕಂಡೆನು. ಅದರಲ್ಲಿ ಬರೆದದ್ದೇನೆಂದರೆ:</verse>
				<verse number="6">ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಸೆರೆಯಾಗಿ ಹೋಗಿ, ಅನಂತರ ಬಂಧನದಿಂದ ಬಿಡುಗಡೆಯಾಗಿ ಯೆರೂಸಲೇಮಿಗೂ, ಯೆಹೂದಕ್ಕೂ, ತಮ್ಮ ತಮ್ಮ ಪಟ್ಟಣಗಳಿಗೂ</verse>
				<verse number="7">ಜೆರುಬ್ಬಾಬೆಲನ ಸಂಗಡ ಹಿಂದಿರುಗಿದವರು ಯಾರೆಂದರೆ: ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರೆತ್, ಬಿಗ್ವೈ, ನೆಹೂಮ್, ಬಾಣ. ಇಸ್ರಾಯೇಲ್ ಜನಾಂಗದ ಪುರುಷರ ಸಂಖ್ಯೆ:</verse>
				<verse number="8">ಪರೋಷನ ವಂಶಜರು 2,172 ಮಂದಿ ಇದ್ದರು.</verse>
				<verse number="9">ಶೆಫಟ್ಯನ ವಂಶಜರು 372 ಮಂದಿ ಇದ್ದರು.</verse>
				<verse number="10">ಆರಹನ ವಂಶಜರು 652 ಮಂದಿ ಇದ್ದರು.</verse>
				<verse number="11">ಯೇಷೂವ, ಯೋವಾಬ್ ಎಂಬವರ ಮಕ್ಕಳಲ್ಲಿ ಪಹತ್ ಮೋವಾಬನ ವಂಶಜರು 2,818 ಮಂದಿ ಇದ್ದರು.</verse>
				<verse number="12">ಏಲಾಮನ ವಂಶಜರು 1,254 ಮಂದಿ ಇದ್ದರು.</verse>
				<verse number="13">ಜತ್ತೂವಿನ ವಂಶಜರು 845 ಮಂದಿ ಇದ್ದರು.</verse>
				<verse number="14">ಜಕ್ಕೈನ ವಂಶಜರು 760 ಮಂದಿ ಇದ್ದರು.</verse>
				<verse number="15">ಬಿನ್ನೂಯನ ವಂಶಜರು 648 ಮಂದಿ ಇದ್ದರು.</verse>
				<verse number="16">ಬೇಬೈನ ವಂಶಜರು 628 ಮಂದಿ ಇದ್ದರು.</verse>
				<verse number="17">ಅಜ್ಗಾದನ ವಂಶಜರು 2,322 ಮಂದಿ ಇದ್ದರು.</verse>
				<verse number="18">ಅದೋನೀಕಾಮಿನ ವಂಶಜರು 667 ಮಂದಿ ಇದ್ದರು.</verse>
				<verse number="19">ಬಿಗ್ವೈ ವಂಶಜರು 2,067 ಮಂದಿ ಇದ್ದರು.</verse>
				<verse number="20">ಅದೀನನ ವಂಶಜರು 655 ಮಂದಿ ಇದ್ದರು.</verse>
				<verse number="21">ಹಿಜ್ಕೀಯನ ಮಗನಾದ ಆಟೇರ್ ವಂಶಜರು 98 ಮಂದಿ ಇದ್ದರು.</verse>
				<verse number="22">ಹಾಷುಮನ ವಂಶಜರು 328 ಮಂದಿ ಇದ್ದರು.</verse>
				<verse number="23">ಬೇಚೈಯ ವಂಶಜರು 324 ಮಂದಿ ಇದ್ದರು.</verse>
				<verse number="24">ಹಾರೀಫನ ವಂಶಜರು 112 ಮಂದಿ ಇದ್ದರು.</verse>
				<verse number="25">ಗಿಬ್ಯೋನನ ವಂಶಜರು 95 ಮಂದಿ ಇದ್ದರು.</verse>
				<verse number="26">ಬೇತ್ಲೆಹೇಮಿನವರೂ ನೆಟೋಫದವರೂ 188 ಮಂದಿ ಇದ್ದರು.</verse>
				<verse number="27">ಅನಾತೋತ್ ಊರಿನವರು 128 ಮಂದಿ ಇದ್ದರು.</verse>
				<verse number="28">ಬೇತ್ ಅಜ್ಮಾವೆತಿನವರು 42 ಮಂದಿ ಇದ್ದರು.</verse>
				<verse number="29">ಕಿರ್ಯತ್ ಯಾರೀಮ್, ಕೆಫೀರಾ, ಬೇರೋತ್ ಎಂಬ ಪಟ್ಟಣದವರು 743 ಮಂದಿ ಇದ್ದರು.</verse>
				<verse number="30">ರಾಮಾ ಗೆಬ ಎಂಬ ಪಟ್ಟಣದವರು 621 ಮಂದಿ ಇದ್ದರು.</verse>
				<verse number="31">ಮಿಕ್ಮಾಷದ ಜನರು 122 ಮಂದಿ ಇದ್ದರು.</verse>
				<verse number="32">ಬೇತೇಲ್ ಮತ್ತು ಆಯಿ ಎಂಬ ಪಟ್ಟಣದವರು 123 ಮಂದಿ ಇದ್ದರು.</verse>
				<verse number="33">ಮತ್ತೊಂದು ನೆಬೋ ಊರಿನವರು 52 ಮಂದಿ ಇದ್ದರು.</verse>
				<verse number="34">ಮತ್ತೊಬ್ಬ ಏಲಾಮನ ವಂಶಜರು 1,254 ಮಂದಿ ಇದ್ದರು.</verse>
				<verse number="35">ಹಾರಿಮನ ವಂಶಜರು 320 ಮಂದಿ ಇದ್ದರು.</verse>
				<verse number="36">ಯೆರಿಕೋವಿನ ವಂಶಜರು 345 ಮಂದಿ ಇದ್ದರು.</verse>
				<verse number="37">ಲೋದ್, ಹಾದೀದ್, ಓನೋ ಎಂಬ ಊರಿನ ಜನರು 721 ಮಂದಿ ಇದ್ದರು.</verse>
				<verse number="38">ಸೆನಾಹನ ವಂಶಜರು 3,930 ಮಂದಿ ಇದ್ದರು.</verse>
				<verse number="39">ಯಾಜಕರು: ಯೇಷೂವನ ಕುಟುಂಬದವರಾದ ಯೆದಾಯನ ವಂಶಜರು 973.</verse>
				<verse number="40">ಇಮ್ಮೇರನ ವಂಶಜರು 1,052.</verse>
				<verse number="41">ಪಷ್ಹೂರನ ವಂಶಜರು 1,247.</verse>
				<verse number="42">ಹಾರಿಮನ ವಂಶಜರು 1,017.</verse>
				<verse number="43">ಲೇವಿಯರು: ಹೋದವ್ಯನ ಸಂತತಿಯಾದ ಯೇಷೂವನ, ಕದ್ಮಿಯೇಲನ ವಂಶಜರು 74.</verse>
				<verse number="44">ಹಾಡುಗಾರರು: ಆಸಾಫನ 148 ವಂಶಜರು.</verse>
				<verse number="45">ದೇವಾಲಯದ ದ್ವಾರಪಾಲಕರಾದ, ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ, ಶೋಬೈ ಮುಂತಾದವರ ಮಕ್ಕಳು 138.</verse>
				<verse number="46">ದೇವಾಲಯದ ಸೇವಕರು: ಜೀಹ, ಹಸೂಫ, ಟಬ್ಬಾವೋತ್,</verse>
				<verse number="47">ಕೆರೋಸ್, ಸೀಯ, ಪದೋನ್,</verse>
				<verse number="48">ಲೆಬಾನ, ಹಗಾಬ, ಶಲ್ಮೈ,</verse>
				<verse number="49">ಹಾನಾನ್, ಗಿದ್ದೇಲ್, ಗಹರ್,</verse>
				<verse number="50">ರೆವಾಯ, ರೆಚೀನ್, ನೆಕೋದ,</verse>
				<verse number="51">ಗಜ್ಜಾಮ್, ಉಜ್ಜ, ಪಾಸೇಹ,</verse>
				<verse number="52">ಬೇಸೈ, ಮೆಯನೀಮ್, ನೆಫೀಸೀಮ್,</verse>
				<verse number="53">ಬಕ್ಬೂಕ್, ಹಕ್ಕೂಫ, ಹರ್ಹೂರ್,</verse>
				<verse number="54">ಬಚ್ಲೂತ್, ಮೆಹೀದ, ಹರ್ಷ,</verse>
				<verse number="55">ಬರ್ಕೋಸ್, ಸೀಸೆರ, ತೆಮಹ,</verse>
				<verse number="56">ನೆಚೀಹ, ಹಟೀಫ, ಇವರ ವಂಶಜರು.</verse>
				<verse number="57">ಸೊಲೊಮೋನನ ಸೇವಕರ ವಂಶಜರು: ಸೋಟೈ, ಸೋಫೆರೆತ್, ಪೆರೀದ,</verse>
				<verse number="58">ಯಾಲ, ದರ್ಕೋನ್, ಗಿದ್ದೇಲ್,</verse>
				<verse number="59">ಶೆಫಟ್ಯ, ಹಟ್ಟೀಲ್, ಪೋಕೆರೆತ್ ಹಚ್ಚೆಬಾಯೀಮ್, ಆಮೋನ್ ಮುಂತಾದವರ ಮಕ್ಕಳು.</verse>
				<verse number="60">ದೇವಾಲಯದ ಸೇವಕರ ಹಾಗೂ ಸೊಲೊಮೋನನ ಸೇವಕರ ವಂಶಜರು ಒಟ್ಟು 392 ಮಂದಿ.</verse>
				<verse number="61">ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್, ಇಮ್ಮೇರ್ ಎಂಬ ಊರುಗಳಿಂದ ಹೊರಟುಬಂದವರಾಗಿದ್ದು, ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ, ತಾವು ಇಸ್ರಾಯೇಲರೆಂಬುದನ್ನು ರುಜುಪಡಿಸಲಾಗದೇ ಇದ್ದವರು ಯಾರೆಂದರೆ:</verse>
				<verse number="62">ದೆಲಾಯ, ಟೋಬೀಯ, ನೆಕೋದ ಇವರ ಸಂತಾನದವರು ಒಟ್ಟು 642 ಮಂದಿ.</verse>
				<verse number="63">ಯಾಜಕರಲ್ಲಿ, ಹಬಯ್ಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು. ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಪುತ್ರಿಯರಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡ ಕಾರಣ ಅವನ ಹೆಸರನ್ನು ಇಟ್ಟುಕೊಂಡನು.</verse>
				<verse number="64">ಇವರು ತಮ್ಮ ವಂಶಾವಳಿಯ ದಾಖಲಾತಿಗಳಲ್ಲಿ ತಮ್ಮ ಹೆಸರುಗಳನ್ನು ಹುಡುಕಿದರು, ಆದರೆ ಅವು ಸಿಕ್ಕದೆ ಹೋದದ್ದರಿಂದ ಅವರು ಅಶುದ್ಧರೆಂದು ಪರಿಗಣಿಸಿ ಯಾಜಕ ಉದ್ಯೋಗದಿಂದ ಬಹಿಷ್ಕಾರವಾದರು.</verse>
				<verse number="65">ಆದ್ದರಿಂದ ಊರೀಮ್, ತುಮ್ಮೀಮ್ ಮುಖಾಂತರ ದೈವನಿರ್ಣಯವನ್ನು ತಿಳಿಸಬಲ್ಲ ಯಾಜಕನು ದೊರೆಯುವ ತನಕ, ಇವರು ಮಹಾಪರಿಶುದ್ಧವಾದ ಪದಾರ್ಥಗಳನ್ನು ತಿನ್ನಬಾರದೆಂದು ರಾಜ್ಯಪಾಲನು ಆದೇಶಿಸಿದನು.</verse>
				<verse number="66">ಸಭೆ ಸೇರಿದ ಸರ್ವಸಮೂಹದ ಒಟ್ಟು ಸಂಖ್ಯೆ 42,360.</verse>
				<verse number="67">ಅವರ ಹೊರತಾಗಿ ಅವರ ದಾಸರೂ ದಾಸಿಯರೂ 7,337 ಮಂದಿಯೂ, ಅವರ ಹಾಡುಗಾರರೂ, ಹಾಡುಗಾರ್ತಿಯರೂ 245 ಮಂದಿಯೂ ಇದ್ದರು.</verse>
				<verse number="68">ಅವರ 736 ಕುದುರೆಗಳು, ಅವರ 245 ಹೇಸರಕತ್ತೆಗಳು.</verse>
				<verse number="69">435 ಒಂಟೆಗಳು, 6,720 ಕತ್ತೆಗಳು ಇದ್ದವು.</verse>
				<verse number="70">ಕುಟುಂಬಗಳ ಕೆಲವು ಮುಖ್ಯಸ್ಥರು ಕೆಲಸಕ್ಕೆ ಕಾಣಿಕೆಗಳನ್ನು ಕೊಟ್ಟರು. ರಾಜ್ಯಪಾಲನು ಬೊಕ್ಕಸಕ್ಕೆ 8.4 ಕಿಲೋಗ್ರಾಂ ಬಂಗಾರದ ನಾಣ್ಯಗಳನ್ನೂ, 50 ಪಾತ್ರೆಗಳನ್ನೂ, 530 ಯಾಜಕರ ಅಂಗಿಗಳನ್ನೂ ಕೊಟ್ಟನು.</verse>
				<verse number="71">ಇದಲ್ಲದೆ ಮುಖ್ಯವಾದ ಪಿತೃಗಳಲ್ಲಿ ಕೆಲವರು ಕೆಲಸದ ಬೊಕ್ಕಸಕ್ಕೆ 170 ಕಿಲೋಗ್ರಾಂ ಬಂಗಾರದ ನಾಣ್ಯಗಳನ್ನೂ, 1.2 ಮೆಟ್ರಿಕ್ ಟನ್ ಬೆಳ್ಳಿಯನ್ನು ಕೊಟ್ಟರು.</verse>
				<verse number="72">ಮಿಕ್ಕಾದ ಜನರು ಕೊಟ್ಟದ್ದೇನೆಂದರೆ: 170 ಕಿಲೋಗ್ರಾಂ ಬಂಗಾರದ ನಾಣ್ಯಗಳನ್ನೂ 1.1 ಮೆಟ್ರಿಕ್ ಟನ್ ಬೆಳ್ಳಿಯನ್ನೂ, 67 ಯಾಜಕರ ಅಂಗಿಗಳನ್ನೂ ಕೊಟ್ಟರು.</verse>
				<verse number="73">ಹೀಗೆಯೇ ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ಸಾಮಾನ್ಯ ಜನರೂ, ದೇವಾಲಯದ ಸೇವಕರೂ, ಸಮಸ್ತ ಇಸ್ರಾಯೇಲರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು. ಏಳನೆಯ ತಿಂಗಳು ಬಂದಾಗ ಇಸ್ರಾಯೇಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.</verse>
			</chapter>
			<chapter number="8">
				<verse number="1">ಜನರೆಲ್ಲರು ಏಕವಾಗಿ ನೀರು ಬಾಗಿಲಿಗೆ ಎದುರಾಗಿರುವ ಬೀದಿಯಲ್ಲಿ ಕೂಡಿಕೊಂಡು ಬಂದರು. ಯೆಹೋವ ದೇವರು ಇಸ್ರಾಯೇಲರಿಗೆ ಆಜ್ಞಾಪಿಸಿದ ಮೋಶೆಯ ನಿಯಮದ ಗ್ರಂಥವನ್ನು ತೆಗೆದುಕೊಂಡು ಬರಲು ಜನರು ನಿಯಮಶಾಸ್ತ್ರಿಯಾದ ಎಜ್ರನಿಗೆ ಹೇಳಿದರು.</verse>
				<verse number="2">ಹೀಗೆಯೇ ಏಳನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸ್ತ್ರೀಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ ಯಾಜಕನಾದ ಎಜ್ರನು ದೇವರ ನಿಯಮವನ್ನು ತೆಗೆದುಕೊಂಡು ಬಂದನು.</verse>
				<verse number="3">ಅನಂತರ ಎಜ್ರನು ನೀರಿನ ಬಾಗಿಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದವರೆಗೆ ಓದಿದನು. ಜನರೆಲ್ಲರು ನಿಯಮದ ಗ್ರಂಥಕ್ಕೆ ಕಿವಿಗೊಟ್ಟರು.</verse>
				<verse number="4">ಆಗ ನಿಯಮಶಾಸ್ತ್ರಿಯಾದ ಎಜ್ರನು ಅದಕ್ಕೋಸ್ಕರ ಮಾಡಲಾಗಿದ್ದ ಒಂದು ಮರದ ಪೀಠದ ಮೇಲೆ ನಿಂತನು. ಅವನ ಬಳಿಯಲ್ಲಿ ಅವನ ಬಲಗಡೆಯಲ್ಲಿ ಮತ್ತಿತ್ಯ. ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ, ಅವನಿಗೆ ಎಡಗಡೆಯಲ್ಲಿ ಪೆದಾಯ್, ಮೀಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ನಿಂತಿದ್ದರು.</verse>
				<verse number="5">ಎಜ್ರನು ಸಕಲ ಜನರ ಕಣ್ಣು ಮುಂದೆ ದೇವರ ಗ್ರಂಥವನ್ನು ತೆರೆದನು. ಸಕಲ ಜನರಿಗಿಂತ ಎತ್ತರವಾದ ಸ್ಥಳದಲ್ಲಿ ನಿಂತಿದ್ದನು. ಅವನು ಅದನ್ನು ತೆರೆದಾಗ, ಜನರೆಲ್ಲರು ಎದ್ದು ನಿಂತರು.</verse>
				<verse number="6">ಆಗ ಎಜ್ರನು ಮಹಾ ದೇವರಾಗಿರುವ ಯೆಹೋವ ದೇವರನ್ನು ಸ್ತುತಿಸಿದನು. ಅದಕ್ಕೆ ಜನರೆಲ್ಲರು ತಮ್ಮ ಕೈಗಳನ್ನೆತ್ತಿ ಉತ್ತರವಾಗಿ, “ಆಮೆನ್, ಆಮೆನ್,” ಎಂದು ಹೇಳಿ ನೆಲದವರೆಗೂ ತಮ್ಮ ತಲೆಗಳನ್ನು ಬಗ್ಗಿಸಿ ಯೆಹೋವ ದೇವರನ್ನು ಆರಾಧಿಸಿದರು.</verse>
				<verse number="7">ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ನಿಯಮವನ್ನು ತಿಳಿಯುವಂತೆ ಹೇಳಿದರು. ಜನರು ತಮ್ಮ ತಮ್ಮ ಸ್ಥಳಗಳಲ್ಲಿ ನಿಂತುಕೊಂಡಿದ್ದರು.</verse>
				<verse number="8">ಜನರು ಎದ್ದು ನಿಂತ ನಂತರ, ಅವರು ದೇವರ ನಿಯಮವನ್ನು ಸ್ಪಷ್ಟವಾಗಿ ಓದುತ್ತಾ, ಅದರ ತಾತ್ಪರ್ಯವನ್ನು ವಿವರಿಸಿದರು. ಜನರು ಚೆನ್ನಾಗಿ ಗ್ರಹಿಸಿಕೊಂಡರು.</verse>
				<verse number="9">ರಾಜಪಾಲನಾದ ನೆಹೆಮೀಯನೂ, ನಿಯಮಶಾಸ್ತ್ರಿಯೂ, ಯಾಜಕನೂ ಆದ ಎಜ್ರನೂ, ಜನರನ್ನು ಬೋಧಿಸುತ್ತಿದ್ದ ಲೇವಿಯರೂ ಜನರೆಲ್ಲರಿಗೆ: “ಈ ದಿನವು ನಿಮ್ಮ ದೇವರಾಗಿರುವ ಯೆಹೋವ ದೇವರಿಗೆ ಪರಿಶುದ್ಧವಾದುದರಿಂದ ದುಃಖಿಸದೆ, ಅಳದೆ ಇರಿ,” ಎಂದರು. ಏಕೆಂದರೆ ಜನರೆಲ್ಲರು ದೇವರ ನಿಯಮದ ಮಾತುಗಳನ್ನು ಕೇಳಿದಾಗ ಅತ್ತರು.</verse>
				<verse number="10">ಇದಲ್ಲದೆ ಎಜ್ರನು ಅವರಿಗೆ, “ನೀವು ಹೋಗಿ ಒಳ್ಳೆಯ ಆಹಾರವನ್ನು ತಿಂದು, ಸಿಹಿಯಾದದ್ದನ್ನು ಕುಡಿಯಿರಿ, ತಮಗಾಗಿ ಸಿದ್ಧಮಾಡಿಕೊಳ್ಳದವರಿಗೆ ಒಂದು ಪಾಲನ್ನು ಕಳುಹಿಸಿಕೊಡಿರಿ. ಈ ದಿನವು ನಮ್ಮ ಯೆಹೋವ ದೇವರಿಗೆ ಪರಿಶುದ್ಧವಾಗಿದೆ. ನೀವು ವ್ಯಥೆಪಡಬೇಡಿರಿ. ಯೆಹೋವ ದೇವರ ಆನಂದವೇ ನಿಮ್ಮ ಬಲ,” ಎಂದು ಹೇಳಿದನು.</verse>
				<verse number="11">ಲೇವಿಯರು ಕೂಡ, “ಈ ದಿನವು ಪರಿಶುದ್ಧವಾದುದರಿಂದ ನೀವು ಶಾಂತವಾಗಿದ್ದು, ವ್ಯಥೆಪಡಬೇಡಿರಿ,” ಎಂದು ಹೇಳಿ ಜನರನ್ನು ಸುಮ್ಮನಿರಿಸಿದರು.</verse>
				<verse number="12">ಆಗ ಜನರೆಲ್ಲರೂ ತಮಗೆ ತಿಳಿಸಿದ ಮಾತುಗಳನ್ನು ಗ್ರಹಿಸಿದ್ದರಿಂದ, ಅವರು ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಆಹಾರ ಪಾಲುಗಳನ್ನು ಕಳುಹಿಸಲೂ ಮತ್ತು ಸಂತೋಷದಿಂದ ಆಚರಿಸಲೂ ಹೊರಟು ಹೋದರು.</verse>
				<verse number="13">ಎರಡನೆಯ ದಿವಸದಲ್ಲಿ ಸಮಸ್ತ ಜನರ ಪಿತೃಗಳಲ್ಲಿರುವ ಮುಖ್ಯವಾದವರೂ ಯಾಜಕರೂ ಲೇವಿಯರೂ ದೇವರ ನಿಯಮದ ಮಾತುಗಳನ್ನು ತಿಳಿದುಕೊಳ್ಳುವ ಹಾಗೆ, ನಿಯಮಶಾಸ್ತ್ರಿಯಾದ ಎಜ್ರನ ಬಳಿಗೆ ಬಂದರು.</verse>
				<verse number="14">ಆಗ ಅವರು ಏಳನೆಯ ತಿಂಗಳ ಹಬ್ಬದಲ್ಲಿ, ಇಸ್ರಾಯೇಲರು ಪರ್ಣಶಾಲೆಗಳಲ್ಲಿ ವಾಸವಾಗಿರಬೇಕೆಂದು ಯೆಹೋವ ದೇವರು ಮೋಶೆಯ ಮುಖಾಂತರ ಆಜ್ಞಾಪಿಸಿದ ವಿಷಯ ನಿಯಮದಲ್ಲಿ ಬರೆದದ್ದನ್ನು ಕಂಡರು.</verse>
				<verse number="15">ಅದರಲ್ಲಿ, “ಪರ್ಣಶಾಲೆಗಳಿಗಾಗಿ ಬೆಟ್ಟಕ್ಕೆ ಹೋಗಿ ಓಲಿವ್, ಕಾಡು ಓಲಿವ್, ಸುಗಂಧ, ಖರ್ಜೂರ ಮುಂತಾದ ದಟ್ಟವಾಗಿರುವ ಗಿಡದ ಕೊಂಬೆಗಳನ್ನೂ ತೆಗೆದುಕೊಂಡು ಬನ್ನಿರಿ ಎಂದೂ, ತಮ್ಮ ಸಕಲ ಪಟ್ಟಣಗಳಲ್ಲಿಯೂ, ಯೆರೂಸಲೇಮಿನಲ್ಲಿಯೂ ಬಹಿರಂಗವಾಗಿ ಸಾರಬೇಕು,” ಎಂದೂ ಬರೆದಿತ್ತು.</verse>
				<verse number="16">ಹಾಗೆಯೇ ಜನರು ಹೊರಟುಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು ಅವರವರು ತಮ್ಮ ಮನೆಗಳ ಮೇಲೆಯೂ, ತಮ್ಮ ಅಂಗಳಗಳಲ್ಲಿಯೂ, ದೇವರ ಮನೆಯ ಅಂಗಳಗಳಲ್ಲಿಯೂ, ನೀರು ಬಾಗಿಲ ಬೀದಿಗಳಲ್ಲಿಯೂ, ಎಫ್ರಾಯೀಮನ ಬಾಗಿಲ ಬೀದಿಗಳಲ್ಲಿಯೂ ತಮಗೆ ಪರ್ಣಶಾಲೆಗಳನ್ನು ಹಾಕಿದರು.</verse>
				<verse number="17">ಈ ಪ್ರಕಾರ ಸೆರೆಯಿಂದ ತಿರುಗಿ ಬಂದ ಸಭೆಯವರೆಲ್ಲರು ಪರ್ಣಶಾಲೆಗಳನ್ನು ಹಾಕಿ, ಅದರಲ್ಲಿ ವಾಸವಾಗಿದ್ದರು. ನೂನನ ಮಗ ಯೆಹೋಶುವನ ದಿನವು ಮೊದಲುಗೊಂಡು ಆ ದಿವಸದವರೆಗೂ ಇಸ್ರಾಯೇಲರು ಹಾಗೆ ಮಾಡಿರಲಿಲ್ಲ. ಅಲ್ಲಿ ಅವರಿಗೆ ಬಹಳ ಸಂತೋಷವಿತ್ತು.</verse>
				<verse number="18">ಎಜ್ರನು ಮೊದಲನೆಯ ದಿವಸದಿಂದ ಕಡೇ ದಿವಸದವರೆಗೂ ದಿನದಿನವೂ ದೇವರ ನಿಯಮದ ಗ್ರಂಥವನ್ನು ಓದುತ್ತಿದ್ದನು. ಹೀಗೆಯೇ ಅವರು ಏಳು ದಿವಸ ಹಬ್ಬವನ್ನು ಆಚರಿಸಿದರು. ಎಂಟನೆಯ ದಿವಸದಲ್ಲಿ ಪದ್ಧತಿಯ ಪ್ರಕಾರ ಸಭೆಯು ಸೇರಿತ್ತು.</verse>
			</chapter>
			<chapter number="9">
				<verse number="1">ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿವಸದಲ್ಲಿ ಇಸ್ರಾಯೇಲರು ಉಪವಾಸ ಮಾಡಿ, ಗೋಣಿತಟ್ಟನ್ನು ಉಟ್ಟುಕೊಂಡು, ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು.</verse>
				<verse number="2">ಆಗ ಇಸ್ರಾಯೇಲ್ ಸಂತಾನದವರು ತಮ್ಮನ್ನು ಸಮಸ್ತ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು, ತಮ್ಮ ಪಾಪಗಳನ್ನೂ, ತಮ್ಮ ಪಿತೃಗಳ ಪಾಪಗಳನ್ನೂ ಅರಿಕೆಮಾಡಿದರು.</verse>
				<verse number="3">ಅವರು ತಮ್ಮ ಸ್ಥಳಗಳಲ್ಲಿ ನಿಂತು ಮೂರು ತಾಸುಗಳು ತಮ್ಮ ದೇವರಾಗಿರುವ ಯೆಹೋವ ದೇವರ ನಿಯಮದ ಗ್ರಂಥವನ್ನು ಓದಿದರು. ಮತ್ತೊಂದು ಮೂರು ತಾಸುಗಳು ತಮ್ಮ ಪಾಪಗಳನ್ನು ಅರಿಕೆಮಾಡಿ, ತಮ್ಮ ದೇವರಾಗಿರುವ ಯೆಹೋವ ದೇವರನ್ನು ಆರಾಧಿಸಿದರು.</verse>
				<verse number="4">ಆಗ ಮೆಟ್ಟಿಲುಗಳ ಮೇಲೆ ಲೇವಿಯರಲ್ಲಿ ಯೇಷೂವ, ಬಾನೀ, ಕದ್ಮಿಯೇಲ್, ಶೆಬನ್ಯ, ಬುನ್ನಿ, ಶೇರೇಬ್ಯ, ಬಾನೀ, ಕೆನಾನಿ ಎಂಬವರು ನಿಂತು ಮಹಾಶಬ್ದದಿಂದ ತಮ್ಮ ದೇವರಾಗಿರುವ ಯೆಹೋವ ದೇವರಿಗೆ ಮೊರೆಯಿಟ್ಟರು.</verse>
				<verse number="5">ಲೇವಿಯರಾದ ಯೇಷೂವ, ಕದ್ಮಿಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು ಜನರಿಗೆ: “ಏಳಿರಿ, ಎಂದೆಂದಿಗೂ ಏಕರೀತಿಯಾಗಿರುವ ನಿಮ್ಮ ದೇವರಾಗಿರುವ ಯೆಹೋವ ದೇವರನ್ನು ಸ್ತುತಿಸಿರಿ,” ಎಂದರು. ಅನಂತರ ಅವರು, “ಯೆಹೋವ ದೇವರೇ, ಸಕಲ ಸ್ತುತಿ ಆಶೀರ್ವಾದಗಳಿಗೆ ಉನ್ನತವಾದದ್ದು ನಿಮ್ಮ ಮಹಿಮೆಯುಳ್ಳ ಹೆಸರು.</verse>
				<verse number="6">ನೀವು ಒಬ್ಬರೇ ದೇವರಾಗಿದ್ದೀರಿ. ನೀವು ಆಕಾಶವನ್ನೂ ಅದರ ಸಮಸ್ತ ಸೈನ್ಯವನ್ನೂ, ಭೂಮಿಯನ್ನೂ, ಅದರಲ್ಲಿರುವ ಪ್ರತಿಯೊಂದನ್ನೂ, ಸಮುದ್ರಗಳನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಉಂಟುಮಾಡಿದ್ದೀರಿ. ಅವುಗಳಿಗೆಲ್ಲಾ ಜೀವ ಕೊಡುವವರು ನೀವೇ. ಇದಲ್ಲದೆ ಆಕಾಶಗಳ ಸೈನ್ಯವು ನಿಮ್ಮನ್ನು ಆರಾಧಿಸುತ್ತವೆ.</verse>
				<verse number="7">“ನೀವು ಅಬ್ರಾಮನನ್ನು ಆಯ್ದುಕೊಂಡಿರುವ ಯೆಹೋವ ದೇವರು. ನೀವು ಅವನನ್ನು ಊರ್ ಎಂಬ ಕಸ್ದೀಯರ ಪಟ್ಟಣದಿಂದ ಹೊರಗೆ ಬರಮಾಡಿ, ಅವನಿಗೆ ಅಬ್ರಹಾಮ್ ಎಂದು ಹೆಸರಿಟ್ಟಿರಿ.</verse>
				<verse number="8">ಅವನ ಹೃದಯವು ನಿಮ್ಮ ಮುಂದೆ ಪ್ರಾಮಾಣಿಕವಾದದ್ದೆಂದೂ ಗುರುತಿಸಿದಿರಿ. ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಯೆಬೂಸಿಯರೂ, ಗಿರ್ಗಾಷಿಯರೂ ಇವರ ದೇಶವನ್ನು, ಅಬ್ರಾಮನ ಸಂತಾನಕ್ಕೆ ಕೊಡುವಂತೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿರಿ. ನೀತಿವಂತರಾದ ನೀವು ನಿಮ್ಮ ವಾಗ್ದಾನವನ್ನು ಈಡೇರಿಸಿದಿರಿ.</verse>
				<verse number="9">“ಇದಲ್ಲದೆ ಈಜಿಪ್ಟಿನಲ್ಲಿ ನಮ್ಮ ಪಿತೃಗಳ ದೀನಸ್ಥಿತಿಯನ್ನು ನೋಡಿದಿರಿ. ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿರಿ.</verse>
				<verse number="10">ಈಜಿಪ್ಟಿನವರು ಗರ್ವಿಗಳಾಗಿ ಇಸ್ರಾಯೇಲರನ್ನು ಕುಗ್ಗಿಸಿದಾಗ, ನೀವು ಫರೋಹನ ಮೇಲೆಯೂ, ಅವನ ಸಮಸ್ತ ಅಧಿಕಾರಿಗಳ ಮೇಲೆಯೂ, ಅವನ ಸಮಸ್ತ ದೇಶದ ಜನರ ಮೇಲೆಯೂ ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿದಿರಿ. ಈ ಪ್ರಕಾರವೇ ನೀವು ಇಂದಿನವರೆಗೂ ನಿಮ್ಮ ಹೆಸರಿನ ಕೀರ್ತಿಯನ್ನು ಸ್ಥಾಪಿಸಿದ್ದೀರಿ.</verse>
				<verse number="11">ನೀವು ಜನರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ, ಅವರು ಸಮುದ್ರದ ನಡುವೆ ಒಣಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನಂತೆ ಮಹಾ ಜಲರಾಶಿಗಳಲ್ಲಿ ಮುಳುಗಿಸಿಬಿಟ್ಟಿರಿ</verse>
				<verse number="12">ಇದಲ್ಲದೆ ಹಗಲಿನಲ್ಲಿ ಮೇಘಸ್ತಂಭದಿಂದಲೂ, ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭದಿಂದಲೂ ಅವರನ್ನು ನಡೆಸಿದಿರಿ.</verse>
				<verse number="13">“ನೀವು ಸೀನಾಯಿ ಪರ್ವತದ ಮೇಲಕ್ಕೆ ಇಳಿದುಬಂದು, ಆಕಾಶದಿಂದ ಅವರ ಸಂಗಡ ಮಾತನಾಡಿದಿರಿ. ಸರಿಯಾದ ನ್ಯಾಯಗಳನ್ನೂ, ಸತ್ಯವಾದ ನಿಯಮಗಳನ್ನೂ, ಉತ್ತಮವಾದ ಕಟ್ಟಳೆಗಳನ್ನೂ, ಆಜ್ಞೆಗಳನ್ನೂ ಅವರಿಗೆ ಕೊಟ್ಟಿರಿ.</verse>
				<verse number="14">ನೀವು ಪರಿಶುದ್ಧ ಸಬ್ಬತ್ ದಿನವನ್ನು ಅವರಿಗೆ ತಿಳಿಸಿ, ನಿಮ್ಮ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ, ಕಟ್ಟಳೆಗಳನ್ನೂ, ನಿಯಮಗಳನ್ನೂ ಕೊಟ್ಟಿರಿ.</verse>
				<verse number="15">ಅವರು ಹಸಿದಾಗ ಆಕಾಶದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿದಿರಿ. ನಿಮ್ಮ ಉನ್ನತ ಹಸ್ತದಿಂದ ವಾಗ್ದಾನ ಮಾಡಿದ ದೇಶದಲ್ಲಿ ನೀವು ಅವರನ್ನು ಸೇರಿಸಿ, ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಹೇಳಿದಿರಿ.</verse>
				<verse number="16">“ಆದರೆ ನಮ್ಮ ಪಿತೃಗಳು ಗರ್ವಪಟ್ಟು ನಡೆದು, ಹಟಮಾರಿಗಳೂ, ಕಠಿಣರೂ ಆಗಿ ನಿಮ್ಮ ಆಜ್ಞೆಗಳಿಗೆ ಅವಿಧೇಯರಾದರು.</verse>
				<verse number="17">ಅವರು ನಿಮ್ಮ ಸ್ವರವನ್ನು ಕೇಳದೆಯೂ, ನೀವು ಅವರ ನಡುವೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕಮಾಡದೆ ಹೋದರು. ಅವರು ತಮ್ಮ ಹೃದಯವನ್ನು ಕಠಿಣ ಮಾಡಿಕೊಂಡು, ನಿಮಗೆ ಎದುರುಬಿದ್ದು, ತಮ್ಮ ದಾಸತ್ವಕ್ಕೆ ತಿರುಗಿ ಹೋಗುವಹಾಗೆ ನಾಯಕನನ್ನು ನೇಮಿಸಿಕೊಂಡರು. ಆದರೆ ನೀವು ಮನ್ನಿಸುವ ದೇವರಾಗಿಯೂ, ಕೃಪಾಪೂರ್ಣರೂ, ಅನುಕಂಪವುಳ್ಳವರೂ, ದೀರ್ಘಶಾಂತರೂ, ಪ್ರೀತಿಯಲ್ಲಿ ಸಮೃದ್ಧರೂ ಆಗಿರುವುದರಿಂದ ಅವರನ್ನು ಕೈಬಿಡಲಿಲ್ಲ.</verse>
				<verse number="18">ಆದರೆ ಅವರು ತಮಗೋಸ್ಕರ ಒಂದು ಎರಕದ ಕರುವನ್ನು ಮಾಡಿಕೊಂಡರು. ‘ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ಇದೇ,’ ಎಂದು ಹೇಳಿ, ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.</verse>
				<verse number="19">“ಆದರೆ ನೀವು ನಿಮ್ಮ ಬಹು ಕರುಣೆಯಿಂದ ಮರುಭೂಮಿಯಲ್ಲಿ ಅವರನ್ನು ಕೈಬಿಡಲಿಲ್ಲ. ಹಗಲಿನಲ್ಲಿ ಅವರಿಗೆ ಮೇಘಸ್ತಂಭವು ದಾರಿ ತೋರಿಸದೆ ಇರಲಿಲ್ಲ. ರಾತ್ರಿಯಲ್ಲಿ ಅವರಿಗೆ ಬೆಳಕನ್ನೂ, ಅವರು ನಡೆಯತಕ್ಕ ಮಾರ್ಗವನ್ನೂ ತೋರಿಸುವ ಅಗ್ನಿ ಸ್ತಂಭವು ಅವರನ್ನು ಬಿಟ್ಟುಹೋಗಲಿಲ್ಲ.</verse>
				<verse number="20">ಇದಲ್ಲದೆ ನೀವು ಅವರಿಗೆ ಬೋಧಿಸುವ ನಿಮ್ಮ ಒಳ್ಳೆಯ ಆತ್ಮವನ್ನು ಕೊಟ್ಟಿರಿ. ಅವರ ಬಾಯಿಂದ ನಿಮ್ಮ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದ ಅವರಿಗೆ ನೀರನ್ನು ಕೊಟ್ಟಿರಿ.</verse>
				<verse number="21">ಹೀಗೆಯೇ ಮರುಭೂಮಿಯಲ್ಲಿ ನಾಲ್ವತ್ತು ವರ್ಷ ಅವರನ್ನು ಪೋಷಿಸುತ್ತಿದ್ದಿರಿ. ಅವರಿಗೆ ಯಾವ ಕೊರತೆಯೂ ಇರಲಿಲ್ಲ. ಅವರ ವಸ್ತ್ರಗಳು ಹಳೆಯದಾಗಲಿಲ್ಲ. ಅವರ ಕಾಲುಗಳು ಬಾತುಹೋಗಲಿಲ್ಲ.</verse>
				<verse number="22">“ನೀವು ಅವರಿಗೆ ರಾಜ್ಯಗಳನ್ನೂ, ಜನಾಂಗಗಳನ್ನೂ ವಶಪಡಿಸಿದಿರಿ. ಅವರಿಗೆ ಮೇರೆಗಳನ್ನು ವಿಭಾಗಿಸಿ ಕೊಟ್ಟಿರಿ. ಆಗ ಅವರು, ಹೆಷ್ಬೋನಿನ ಅರಸನಾದ ಸೀಹೋನನ ದೇಶವನ್ನೂ, ಬಾಷಾನಿನ ಅರಸನಾದ ಓಗನ ದೇಶವನ್ನೂ ಸ್ವಾಧೀನಮಾಡಿಕೊಂಡರು.</verse>
				<verse number="23">ಇದಲ್ಲದೆ ಅವರ ಮಕ್ಕಳನ್ನು ಆಕಾಶದ ನಕ್ಷತ್ರಗಳ ಹಾಗೆ ಹೆಚ್ಚಿಸಿದಿರಿ. ಅವರು ಸ್ವಾಧೀನಮಾಡಿಕೊಳ್ಳುವರು ಎಂದು ನೀವು ಅವರ ಪಿತೃಗಳಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಬರಮಾಡಿದಿರಿ.</verse>
				<verse number="24">ಹಾಗೆಯೇ ಇಸ್ರಾಯೇಲರು ಹೋಗಿ, ಆ ದೇಶವನ್ನು ಸ್ವಾಧೀನಮಾಡಿಕೊಂಡರು. ನೀವು ಆ ದೇಶದ ನಿವಾಸಿಗಳಾದ ಕಾನಾನ್ಯರನ್ನು ಅವರ ಮುಂದೆ ಕುಗ್ಗಿಸಿ, ಅವರಿಗೆ ಸರಿತೋರಿದ ಪ್ರಕಾರ ಮಾಡುವುದಕ್ಕೆ ಅವರನ್ನೂ, ಅವರ ಅರಸರನ್ನೂ, ದೇಶದ ಜನರನ್ನೂ ಅವರ ಕೈಯಲ್ಲಿ ಒಪ್ಪಿಸಿಕೊಟ್ಟಿರಿ.</verse>
				<verse number="25">ಅವರು ಕೋಟೆ ಪಟ್ಟಣಗಳನ್ನೂ, ರಸವತ್ತಾದ ಭೂಮಿಯನ್ನೂ ವಶಪಡಿಸಿಕೊಂಡರು. ಉತ್ತಮವಾದವುಗಳಿಂದ ತುಂಬಿದ ಮನೆಗಳನ್ನೂ, ಅಗಿದ ಬಾವಿಗಳನ್ನೂ, ದ್ರಾಕ್ಷಿತೋಟಗಳನ್ನೂ, ಓಲಿವ್ ತೋಪುಗಳನ್ನೂ, ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು, ಪುಷ್ಟಿಯಾಗಿ ನಿಮ್ಮ ಮಹಾ ಉಪಕಾರದಲ್ಲಿ ಆನಂದಿಸುತ್ತಿದ್ದರು.</verse>
				<verse number="26">“ಆದರೂ ಅವರು ನಿಮಗೆ ಅವಿಧೇಯರಾಗಿ ತಿರುಗಿಬಿದ್ದು, ನಿಮ್ಮ ನಿಯಮವನ್ನು ಉಲ್ಲಂಘಿಸಿ, ತಮ್ಮನ್ನು ಎಚ್ಚರಿಸುವುದಕ್ಕೂ, ನಿಮ್ಮ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿಮ್ಮ ಪ್ರವಾದಿಗಳನ್ನೇ ಕೊಂದುಹಾಕಿದರು. ಹೀಗೆ ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು.</verse>
				<verse number="27">ಆದ್ದರಿಂದ ನೀವು ಬಾಧಿಸುವ ವಿರೋಧಿಗಳ ಕೈಗೆ ಅವರನ್ನು ಒಪ್ಪಿಸಿದಿರಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿಮಗೆ ಮೊರೆಯಿಟ್ಟಾಗ, ನೀವು ಪರಲೋಕದಿಂದ ಕೇಳಿ, ನಿಮ್ಮ ಮಹಾ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವುದಕ್ಕೆ ರಕ್ಷಕರನ್ನು ಅವರಿಗೆ ಕಳುಹಿಸಿದಿರಿ.</verse>
				<verse number="28">“ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದಕಾರಣ ಅವರ ಶತ್ರುಗಳು ಅವರನ್ನು ಮತ್ತೆ ಆಳುವಂತೆ ಶತ್ರು ಕೈಗೆ ಅವರನ್ನು ಒಪ್ಪಿಸಿದಿರಿ. ಆದರೆ ಅವರು ತಿರುಗಿ ನಿಮ್ಮನ್ನು ಕೂಗಿಕೊಳ್ಳಲು, ನೀವು ಪರಲೋಕದಿಂದ ಕೇಳಿ, ನಿಮ್ಮ ಅನುಕಂಪಕ್ಕೆ ಅನುಸಾರವಾಗಿ ಅವರನ್ನು ಅನೇಕ ಸಾರಿ ವಿಮೋಚಿಸಿದಿರಿ.</verse>
				<verse number="29">“ನೀವು ಅವರನ್ನು ನಿಮ್ಮ ನಿಯಮಕ್ಕೆ ಮರಳಿ ಬರುವ ಹಾಗೆ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಗರ್ವಪಟ್ಟು, ನಿಮ್ಮ ಆಜ್ಞೆಗಳನ್ನು ಅನುಸರಿಸದೆ ಹೋದರು. ನಿಮ್ಮ ವಾಕ್ಯಗಳನ್ನು ಕೈಗೊಳ್ಳುವುದರಿಂದ ಮನುಷ್ಯರು ಬದುಕುವರು ಎಂಬುದನ್ನು ಅವರು ತಿಳಿದಿದ್ದರೂ, ಆ ನಿಮ್ಮ ವಾಕ್ಯಗಳಿಗೆ ವಿರೋಧವಾಗಿ ಪಾಪಮಾಡಿ, ತಮ್ಮ ಹೃದಯವನ್ನು ಕಠಿಣಪಡಿಸಿಕೊಂಡು ನಿಮ್ಮ ಮಾತನ್ನು ಕೇಳದೆ ಹೋದರು.</verse>
				<verse number="30">ನೀವು ಅನೇಕ ವರ್ಷ ಅವರನ್ನು ತಾಳಿಕೊಂಡಿರಿ. ನಿಮ್ಮ ಪ್ರವಾದಿಗಳ ಮುಖಾಂತರ ನಿಮ್ಮ ಆತ್ಮನಿಂದ ಅವರನ್ನು ಎಚ್ಚರಿಸಿದಿರಿ. ಆದರೆ ಅವರು ಕಿವಿಗೊಡದೆ ಇದ್ದುದರಿಂದ ನೀವು ಅವರನ್ನು ಅನ್ಯದೇಶದವರ ಕೈಯಲ್ಲಿ ಒಪ್ಪಿಸಿದಿರಿ.</verse>
				<verse number="31">ಆದರೂ ನೀವು ನಿಮ್ಮ ಮಹಾ ಕರುಣೆಯಲ್ಲಿ ಅವರನ್ನು ನಾಶಮಾಡಲಿಲ್ಲ. ಅವರನ್ನು ಕೈಬಿಡಲೂ ಇಲ್ಲ. ಏಕೆಂದರೆ ನೀವು ಕೃಪೆಯೂ, ಕರುಣೆಯೂ ಉಳ್ಳ ದೇವರಾಗಿದ್ದೀರಿ.</verse>
				<verse number="32">“ಆದಕಾರಣ ನಮ್ಮ ದೇವರೇ, ಪ್ರೀತಿಯ ಒಡಂಬಡಿಕೆಯನ್ನು ಕೈಗೊಳ್ಳುವಂಥ ಮಹಾ ಪರಾಕ್ರಮವುಳ್ಳ ಭಯಭಕ್ತಿಗೆ ಕಾರಣರಾದ ದೇವರೇ, ಅಸ್ಸೀರಿಯದ ಅರಸರ ಕಾಲ ಮೊದಲ್ಗೊಂಡು ಇಂದಿನವರೆಗೆ ನಮ್ಮ ಮೇಲೆಯೂ, ನಮ್ಮ ಅರಸರ ಮೇಲೆಯೂ, ನಮ್ಮ ಪ್ರಧಾನರ ಮೇಲೆಯೂ, ನಮ್ಮ ಯಾಜಕರ ಮೇಲೆಯೂ, ನಮ್ಮ ಪ್ರವಾದಿಗಳ ಮೇಲೆಯೂ, ನಮ್ಮ ಪಿತೃಗಳ ಮೇಲೆಯೂ, ನಿಮ್ಮ ಸಮಸ್ತ ಜನರ ಮೇಲೆಯೂ ಬಂದ ಇವೆಲ್ಲಾ ಕಷ್ಟಸಂಕಟಗಳು ನಿಮಗೆ ಅಲ್ಪವಾಗಿ ಕಾಣದಿರಲಿ.</verse>
				<verse number="33">ನೀವು ನಮ್ಮ ಮೇಲೆ ಬರಮಾಡಿದ ಎಲ್ಲದರಲ್ಲಿಯೂ ನ್ಯಾಯವಂತರಾಗಿರುವಿರಿ. ಏಕೆಂದರೆ ನೀವು ಮಾಡಿದ್ದು ಸತ್ಯಕ್ಕನುಸಾರವಾದದ್ದು. ಆದರೆ ನಾವು ದುಷ್ಟರಾಗಿ ನಡೆದೆವು.</verse>
				<verse number="34">ನಮ್ಮ ಅರಸರೂ, ನಮ್ಮ ಪ್ರಧಾನರೂ, ನಮ್ಮ ಯಾಜಕರೂ, ನಮ್ಮ ಪಿತೃಗಳೂ ನಿಮ್ಮ ನಿಯಮವನ್ನು ಕೈಗೊಳ್ಳದೆ, ನಿಮ್ಮ ಆಜ್ಞೆಗಳನ್ನೂ, ನೀವು ಅವರಿಗೆ ಎಚ್ಚರಿಸಿದ ನಿಮ್ಮ ಎಚ್ಚರಿಕೆಗಳನ್ನೂ ಕೇಳದೆ ಹೋದರು.</verse>
				<verse number="35">ಅವರು ತಮ್ಮ ರಾಜ್ಯದಲ್ಲಿಯೂ, ನೀವು ಅವರಿಗೆ ಮಾಡಿದ ಮಹಾ ಉಪಕಾರದಲ್ಲಿಯೂ ನೀವು ಅವರಿಗೆ ಕೊಟ್ಟ ವಿಸ್ತಾರವಾದ, ರಸವತ್ತಾದ ದೇಶದಲ್ಲಿಯೂ, ನಿಮ್ಮನ್ನು ಸೇವಿಸಲಿಲ್ಲ. ತಮ್ಮ ಕೆಟ್ಟ ಕಾರ್ಯಗಳನ್ನು ಬಿಟ್ಟು ತಿರುಗಲೂ ಇಲ್ಲ.</verse>
				<verse number="36">“ಈ ದಿವಸ ನಾವು ಗುಲಾಮರಾಗಿದ್ದೇವೆ. ಅದರ ಫಲವನ್ನೂ, ಅದರ ಉತ್ತಮವಾದದ್ದನ್ನೂ ತಿನ್ನುವುದಕ್ಕೆ ನೀವು ನಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ನಾವು ಗುಲಾಮರಾಗಿದ್ದೇವೆ.</verse>
				<verse number="37">ನಮ್ಮ ಪಾಪಗಳ ನಿಮಿತ್ತ ನೀವು ನಮ್ಮ ಮೇಲೆ ಇಟ್ಟ ಅರಸರಿಗೆ ಅದರ ಹುಟ್ಟುವಳಿ ಬಹಳವಾಗಿ ಹೋಗುತ್ತಿದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಮೇಲೆಯೂ, ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ. ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.</verse>
				<verse number="38">“ಇದೆಲ್ಲದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ. ನಮ್ಮ ಪ್ರಧಾನರೂ, ಲೇವಿಯರೂ, ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ,” ಎಂದು ಪ್ರಾರ್ಥಿಸಿದರು.</verse>
			</chapter>
			<chapter number="10">
				<verse number="1">ಮುದ್ರೆ ಹಾಕಿದವರು ಯಾರೆಂದರೆ: ಅಧಿಪತಿಯಾದ ಹಕಲ್ಯನ ಮಗ ನೆಹೆಮೀಯನು. ಚಿದ್ಕೀಯ,</verse>
				<verse number="2">ಸೆರಾಯ, ಅಜರ್ಯ, ಯೆರೆಮೀಯ,</verse>
				<verse number="3">ಪಷ್ಹೂರ, ಅಮರ್ಯ, ಮಲ್ಕೀಯನ,</verse>
				<verse number="4">ಹಟ್ಟೂಷ್, ಶೆಬನ್ಯ, ಮಲ್ಲೂಕ್,</verse>
				<verse number="5">ಹಾರಿಮ್, ಮೆರೇಮೋತ್, ಓಬದ್ಯ,</verse>
				<verse number="6">ದಾನಿಯೇಲ, ಗಿನ್ನೆತೋನ್, ಬಾರೂಕ್,</verse>
				<verse number="7">ಮೆಷುಲ್ಲಾಮ್, ಅಬೀಯ, ಮಿಯಾಮಿನ್,</verse>
				<verse number="8">ಮಾಜ್ಯ, ಬಿಲ್ಗೈ, ಶೆಮಾಯ ಇವರು ಯಾಜಕರಾಗಿದ್ದರು.</verse>
				<verse number="9">ಲೇವಿಯರು: ಅಜನ್ಯನ ಮಗನಾದ ಯೇಷೂವ, ಹೇನಾದಾದ್ ಎಂಬವನ ಮಕ್ಕಳಲ್ಲಿ ಬಿನ್ನೂಯ್, ಕದ್ಮಿಯೇಲ್,</verse>
				<verse number="10">ಅವರ ಸಂಗಡಿಗರಾದ ಶೆಬನ್ಯ, ಹೋದೀಯ, ಕೆಲೀಟ, ಪೆಲಾಯ, ಹಾನಾನ್,</verse>
				<verse number="11">ಮೀಕ, ರೆಹೋಬ್, ಹಷಬ್ಯ,</verse>
				<verse number="12">ಜಕ್ಕೂರ್, ಶೇರೇಬ್ಯ, ಶೆಬನ್ಯ,</verse>
				<verse number="13">ಹೋದೀಯ, ಬಾನೀ, ಬೆನೀನೂ ಎಂಬವರು.</verse>
				<verse number="14">ಜನರ ಮುಖ್ಯಸ್ಥರು ಪರೋಷ್, ಪಹತ್ ಮೋವಾಬ್, ಏಲಾಮ್, ಜತ್ತೂ, ಬಾನೀ,</verse>
				<verse number="15">ಬುನ್ನಿ, ಅಜ್ಗಾದ್, ಬೇಬೈ,</verse>
				<verse number="16">ಅದೋನೀಯ, ಬಿಗ್ವೈ, ಅದೀನ್,</verse>
				<verse number="17">ಆಟೇರ್, ಹಿಜ್ಕೀಯ, ಅಜ್ಜೂರ್,</verse>
				<verse number="18">ಹೋದೀಯ, ಹಾಷುಮ್, ಬೇಚೈ,</verse>
				<verse number="19">ಹಾರೀಫ್, ಅನಾತೋತ್, ನೇಬೈ,</verse>
				<verse number="20">ಮಗ್ಪೀಯಾಷ್, ಮೆಷುಲ್ಲಾಮ್, ಹೇಜೀರ್,</verse>
				<verse number="21">ಮೆಷೇಜಬೇಲ್, ಚಾದೋಕ್, ಯದ್ದೂವ,</verse>
				<verse number="22">ಪೆಲಟ್ಯ, ಹಾನಾನ್, ಅನಾಯ,</verse>
				<verse number="23">ಹೋಶೇಯ, ಹನನ್ಯ, ಹಷ್ಷೂಬ್,</verse>
				<verse number="24">ಹಲ್ಲೋಹೇಷ್, ಪಿಲ್ಹ, ಶೋಬೇಕ್,</verse>
				<verse number="25">ರೆಹೂಮ್, ಹಷಬ್ನ, ಮಾಸೇಯ</verse>
				<verse number="26">ಅಹೀಯ, ಹಾನಾನ್, ಆನಾನ್,</verse>
				<verse number="27">ಮಲ್ಲೂಕ್, ಹಾರಿಮ್, ಬಾಣನು.</verse>
				<verse number="28">ಜನರಲ್ಲಿ ಉಳಿದವರಾದ ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ದೇವಾಲಯದ ಸೇವಕರೂ, ದೇವರ ನಿಯಮದ ಪ್ರಕಾರವಾಗಿ ಆ ದೇಶಗಳ ಜನರೊಳಗಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡವರೆಲ್ಲರೂ, ಅವರ ಹೆಂಡತಿಯರೂ, ಅವರ ಪುತ್ರರೂ, ಅವರ ಪುತ್ರಿಯರೂ, ತಿಳುವಳಿಕೆಯೂ ಗ್ರಹಿಕೆಯೂ ಉಳ್ಳವರೆಲ್ಲರೂ,</verse>
				<verse number="29">ತಮ್ಮ ಸಹೋದರರಾದ ತಮ್ಮ ಶ್ರೇಷ್ಠರ ಸಂಗಡ ಕೂಡಿಕೊಂಡು ದೇವರ ಸೇವಕ ಮೋಶೆಯ ಕೈಯಿಂದ ಕೊಟ್ಟ ದೇವರ ನಿಯಮದಂತೆ ನಡೆಯುತ್ತೇವೆಂದೂ, ನಮ್ಮ ಕರ್ತ ಆಗಿರುವ ಯೆಹೋವ ದೇವರ ಆಜ್ಞೆಗಳನ್ನೂ, ಅವರ ನ್ಯಾಯಗಳನ್ನೂ, ಅವರ ಕಟ್ಟಳೆಗಳನ್ನೂ, ಎಲ್ಲವನ್ನೂ ಕೈಗೊಂಡು ಮಾಡುತ್ತೇವೆಂದೂ ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು;</verse>
				<verse number="30">ನಾವು ನಮ್ಮ ಪುತ್ರಿಯರನ್ನು ಇತರ ಜನರಿಗೆ ಕೊಡುವುದಿಲ್ಲ, ನಮ್ಮ ಪುತ್ರರಿಗೆ ಅವರ ಪುತ್ರಿಯರನ್ನು ತೆಗೆದುಕೊಳ್ಳುವುದಿಲ್ಲ ಎಂದು ಆಣೆ ಮಾಡುತ್ತೇವೆ.</verse>
				<verse number="31">ಬೇರೆ ದೇಶದ ಜನರು ಸಬ್ಬತ್ ದಿನದಲ್ಲಿ ಸರಕುಗಳನ್ನೂ ಧಾನ್ಯವನ್ನೂ ಮಾರಲು ತೆಗೆದುಕೊಂಡು ಬಂದರೆ, ನಾವು ಅವುಗಳನ್ನು ಸಬ್ಬತ್ ದಿನದಲ್ಲಾದರೂ, ಪರಿಶುದ್ಧ ದಿನದಲ್ಲಾದರೂ ಅವರಿಂದ ಕೊಂಡುಕೊಳ್ಳುವುದಿಲ್ಲ. ಮತ್ತು ನಾವು ಏಳನೆಯ ವರ್ಷದಲ್ಲಿ ಭೂಮಿ ಕೆಲಸ ಮಾಡುವುದನ್ನು ಬಿಡುತ್ತೇವೆ ಮತ್ತು ಎಲ್ಲಾ ಸಾಲಗಳನ್ನು ರದ್ದುಗೊಳಿಸುತ್ತೇವೆ.</verse>
				<verse number="32">ವರ್ಷಕ್ಕೆ 4 ಗ್ರಾಂ ಬೆಳ್ಳಿಯನ್ನು ನಮ್ಮ ದೇವರ ಆಲಯದ ಸೇವೆಗಾಗಿ ಕೊಡಬೇಕೆಂಬ ನಿಯಮವನ್ನು ಪಾಲಿಸಿಕೊಳ್ಳುತ್ತೇವೆ.</verse>
				<verse number="33">ಈ ಹಣವನ್ನು, ಸಮ್ಮುಖದ ರೊಟ್ಟಿಗೋಸ್ಕರವೂ, ನಿತ್ಯಧಾನ್ಯ ಕಾಣಿಕೆಗೋಸ್ಕರವೂ, ವಿಶ್ರಾಂತಿಯ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಅರ್ಪಿಸುವ ನಿತ್ಯ ದಹನಬಲಿಗಳಿಗೋಸ್ಕರವೂ, ನೇಮಿಸಿದ ಹಬ್ಬಗಳಿಗೋಸ್ಕರವೂ, ಇಸ್ರಾಯೇಲರ ಪ್ರಾಯಶ್ಚಿತ್ತವಾದ ದೋಷಪರಿಹಾರದ ಬಲಿಗೋಸ್ಕರವೂ, ನಮ್ಮ ದೇವರ ಆಲಯದ ಸಮಸ್ತ ಕಾರ್ಯಕ್ಕೋಸ್ಕರವೂ ಉಪಯೋಗಿಸಬೇಕು.</verse>
				<verse number="34">ಮೋಶೆಯ ನಿಯಮದಲ್ಲಿ ಬರೆದ ಹಾಗೆ ನಮ್ಮ ದೇವರಾಗಿರುವ ಯೆಹೋವ ದೇವರ ಬಲಿಪೀಠದ ಮೇಲೆ ಅರ್ಪಿಸುವುದಕ್ಕೆ ನೇಮಿತವಾದ ಕಾಲಗಳಲ್ಲಿ, ವರ್ಷ ವರ್ಷಕ್ಕೆ ನಮ್ಮ ಪಿತೃಗಳ ಗೋತ್ರಗಳ ಪ್ರಕಾರ ನಮ್ಮ ದೇವಾಲಯದೊಳಗೆ ತೆಗೆದುಕೊಂಡು ಬರಬೇಕಾದ ಸೌದೆಯ ಅರ್ಪಣೆಗೋಸ್ಕರ ಯಾಜಕರಿಗೂ, ಲೇವಿಯರಿಗೂ, ಜನರಿಗೂ ಚೀಟಿಗಳನ್ನು ಹಾಕಿದೆವು.</verse>
				<verse number="35">ಯೆಹೋವ ದೇವರ ಆಲಯಕ್ಕೆ ಪ್ರತಿ ವರ್ಷದಲ್ಲಿಯೂ ನಮ್ಮ ಭೂಮಿಯ ಫಲಗಳಿಂದ ಪ್ರಥಮ ಫಲಗಳನ್ನು ತರುವುದಕ್ಕೂ,</verse>
				<verse number="36">ಮೋಶೆಯ ನಿಯಮದಲ್ಲಿ ಬರೆದಿರುವ ಹಾಗೆ ನಮ್ಮ ಪುತ್ರರಲ್ಲಿಯೂ, ನಮ್ಮ ಪಶುಗಳಲ್ಲಿಯೂ ಚೊಚ್ಚಲಾದವುಗಳನ್ನು; ನಮ್ಮ ದನಗಳಲ್ಲಿಯೂ, ಮಂದೆಗಳಲ್ಲಿಯೂ ಚೊಚ್ಚಲಾದವುಗಳನ್ನು, ನಮ್ಮ ದೇವರ ಆಲಯಕ್ಕೆ ತಂದು, ನಮ್ಮ ದೇವರ ಆಲಯದಲ್ಲಿ ಸೇವಿಸುವ ಯಾಜಕರಿಗೆ ಕೊಡುತ್ತೇವೆ;</verse>
				<verse number="37">ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನು ನಮ್ಮ ಕಾಣಿಕೆಗಳನ್ನೂ, ಸಕಲ ಮರಗಳ ಫಲವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುತ್ತೇವೆ; ಲೇವಿಯರು ಒಕ್ಕಲುತನವಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವುದಕ್ಕೂ ಪ್ರಮಾಣ ಮಾಡಿದೆವು.</verse>
				<verse number="38">ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತನೆಯ ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಟ್ಟಡಿಗಳ ಬಳಿಯಿರುವ ಬೊಕ್ಕಸದ ಮನೆಗೆ ತರಬೇಕು.</verse>
				<verse number="39">ಏಕೆಂದರೆ ಪರಿಶುದ್ಧ ಸ್ಥಾನದ ಸಲಕರಣೆಗಳೂ, ಸೇವೆ ಮಾಡುವ ಯಾಜಕರೂ, ದ್ವಾರಪಾಲಕರೂ, ಹಾಡುಗಾರರೂ ಇರುವ ಕೊಟ್ಟಡಿಗಳಿಗೆ ಇಸ್ರಾಯೇಲರೂ, ಲೇವಿಯರ ಮಕ್ಕಳೂ, ಕಾಣಿಕೆಯಾದ ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ತರಬೇಕು. “ನಾವು ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯಮಾಡುವುದಿಲ್ಲ,” ಎಂದು ಬರೆದುಕೊಟ್ಟರು.</verse>
			</chapter>
			<chapter number="11">
				<verse number="1">ಈಗ ಜನರ ನಾಯಕರು ಯೆರೂಸಲೇಮಿನಲ್ಲಿ ನೆಲೆಸಿದರು. ಉಳಿದ ಜನರೊಳಗೆ ಹತ್ತು ಮಂದಿಯಲ್ಲಿ ಒಂಬತ್ತು ಮಂದಿ ತಮ್ಮ ತಮ್ಮ ಊರುಗಳಲ್ಲಿ ಇದ್ದುಕೊಂಡು, ಹತ್ತರಲ್ಲೊಬ್ಬರು ಪವಿತ್ರ ನಗರವಾದ ಯೆರೂಸಲೇಮಿನಲ್ಲಿ ಬಂದು ವಾಸಿಸಲು ಚೀಟುಹಾಕಿದರು.</verse>
				<verse number="2">ಆಗ ಜನರು ಯೆರೂಸಲೇಮಿನಲ್ಲಿ ವಾಸವಾಗಿರಲು, ಸಮ್ಮತಿಪಟ್ಟವರೆಲ್ಲರನ್ನು ಆಶೀರ್ವದಿಸಿದರು.</verse>
				<verse number="3">ಯೆರೂಸಲೇಮಿನಲ್ಲಿ ವಾಸವಾಗಿದ್ದ ಸಂಸ್ಥಾನಪ್ರಧಾನರು ಯಾರೆಂದರೆ: ಯೆಹೂದದ ಪಟ್ಟಣಗಳಲ್ಲಿ ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ದೇವಾಲಯದ ಸೇವಕರೂ, ಸೊಲೊಮೋನನ ಸೇವಕರ ಮಕ್ಕಳೂ, ಅವರವರು ತಮ್ಮ ತಮ್ಮ ಪಟ್ಟಣಗಳ ಸ್ವಾಸ್ತ್ಯಗಳಲ್ಲಿ ವಾಸವಾಗಿದ್ದರು.</verse>
				<verse number="4">ಯೆರೂಸಲೇಮಿನಲ್ಲಿ ಯೆಹೂದ ಮಕ್ಕಳಲ್ಲಿಯೂ, ಬೆನ್ಯಾಮೀನ್ಯರಲ್ಲಿಯೂ ಕೆಲವರು ವಾಸವಾಗಿದ್ದರು. ಯೆಹೂದನ ವಂಶಜರಲ್ಲಿ: ಒಬ್ಬನು ಅತಾಯನು, ಇವನು ಉಜ್ಜೀಯನ ಮಗ, ಜೆಕರ್ಯನ ಮಗ, ಅಮರ್ಯನ ಮಗ, ಶೆಫಟ್ಯನ ಮಗ, ಮಹಲಲೇಲನ ಮಗ, ಇವನು ಪೆರೆಚ್ ಸಂತಾನದವನು.</verse>
				<verse number="5">ಇನ್ನೊಬ್ಬನು ಬಾರೂಕನ ಮಗ ಮಾಸೇಯ. ಇವನು ಕೊಲ್ಹೋಜೆಯ ಮಗ, ಇವನು ಹಜಾಯನ ಮಗ, ಇವನು ಅದಾಯನ ಮಗ, ಇವನು ಯೋಯಾರೀಬನ ಮಗ, ಇವನು ಜೆಕರ್ಯನ ಮಗ, ಇವನು ಶೇಲಹನ ಸಂತಾನದವನು.</verse>
				<verse number="6">ಯೆರೂಸಲೇಮಿನಲ್ಲಿ ವಾಸವಾಗಿರುವ ಪೆರೆಚನ ಪುತ್ರರೆಲ್ಲಾ 468 ಮಂದಿ. ಇವರು ಪರಾಕ್ರಮಶಾಲಿಗಳು.</verse>
				<verse number="7">ಬೆನ್ಯಾಮೀನನ ವಂಶಜರು: ಸಲ್ಲು, ಇವನು ಮೆಷುಲ್ಲಾಮನ ಮಗ, ಯೆಶಾಯನ ಮಗ, ಇಥಿಯೇಲನ ಮಗ, ಮಾಸೇಯನ ಮಗ, ಕೊಲಾಯನ ಮಗ, ಪೆದಾಯನ ಮಗ, ಯೊವೇದನ ಮಗ,</verse>
				<verse number="8">ಅವನ ತರುವಾಯ ಗಬ್ಬಾಯನು, ಸಲ್ಲಾಯನು, ಮೊದಲಾದ ಮಂದಿ 928.</verse>
				<verse number="9">ಜಿಕ್ರಿಯ ಮಗ, ಯೋಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು. ಹಸ್ಸೆನುವಾಹನ ಮಗ ಯೆಹೂದನು ಪಟ್ಟಣದ ಹೊಸ ಭಾಗದ ಮೇಲೆ ಮೇಲ್ವಿಚಾರಕನಾಗಿದ್ದನು.</verse>
				<verse number="10">ಯಾಜಕರಲ್ಲಿ ಯಾರೆಂದರೆ: ಯೋಯಾರೀಬನ ಮಗ ಯೆದಾಯನು, ಯಾಕೀನನು.</verse>
				<verse number="11">ಅಹೀಟೂಬನ ಮಗ, ಮೆರಾಯೋತನ ಮಗ, ಚಾದೋಕನ ಮಗ, ಮೆಷುಲ್ಲಾಮನ ಮಗ, ಹಿಲ್ಕೀಯನ ಮಗ ಸೆರಾಯನು ದೇವರ ಆಲಯದ ನಾಯಕನಾಗಿದ್ದನು.</verse>
				<verse number="12">ದೇವಾಲಯದ ಕೆಲಸವನ್ನು ನಡೆಸುವ ಅವರ ಸಹೋದರರು 822 ಮಂದಿ ಇದ್ದರು. ಮಲ್ಕೀಯನ ಮಗ, ಪಷ್ಹೂರನ ಮಗ, ಜೆಕರ್ಯನ ಮಗ, ಅಮ್ಚೀಯ ಮಗ, ಪೆಲಲ್ಯನ ಮಗ, ಯೆರೋಹಾಮನ ಮಗ ಅದಾಯನೂ.</verse>
				<verse number="13">ಪಿತೃಗಳಲ್ಲಿ ಮುಖ್ಯಸ್ಥರಾದ ಅವನ ಸಹೋದರರೂ 242 ಮಂದಿಯಾಗಿದ್ದರು. ಇಮ್ಮೇರನ ಮಗ ಮೆಷಿಲ್ಲೇಮೋತನ ಮಗ, ಅಹಜೈಯ ಮಗ, ಅಜರಯೇಲನ ಮಗ ಅಮಾಷಸಾಯಿ.</verse>
				<verse number="14">ಪರಾಕ್ರಮಶಾಲಿಗಳಾಗಿದ್ದ ಅವರ ಸಹೋದರರು 128 ಮಂದಿ ಇದ್ದರು. ಹಗ್ಗೆದೋಲೀಮನ ಮಗನಾದ ಜಬ್ದಿಯೇಲನು ಅವರಿಗೆ ಮೇಲ್ವಿಚಾರಕನಾಗಿದ್ದನು.</verse>
				<verse number="15">ಲೇವಿಯರಲ್ಲಿ ಯಾರೆಂದರೆ: ಬುನ್ನಿಯ ಮಗ, ಹಷಬ್ಯನ ಮಗ, ಅಜ್ರೀಕಾಮನ ಮಗ, ಹಷ್ಷೂಬನ ಮಗ ಶೆಮಾಯನು.</verse>
				<verse number="16">ಲೇವಿಯರ ಮುಖ್ಯಸ್ಥರಲ್ಲಿ ಶಬ್ಬೆತೈನೂ, ಯೋಜಾಬಾದನೂ ದೇವರ ಆಲಯದ ಹೊರಗಿನ ಕೆಲಸವನ್ನು ವಿಚಾರಿಸುವವರಾಗಿದ್ದರು.</verse>
				<verse number="17">ಇದಲ್ಲದೆ ಆಸಾಫನ ಮಗ ಜಬ್ದೀಯ ಮಗ, ಮೀಕನ ಮಗ ಮತ್ತನ್ಯನು ಪ್ರಾರ್ಥನೆಯನ್ನು ಮತ್ತು ಕೃತಜ್ಞತಾಸ್ತುತಿಯನ್ನು ಪ್ರಾರಂಭಿಸಲು ಮುಖ್ಯಸ್ಥನಾಗಿದ್ದನು. ಅವನ ಸಂಗಡಿಗರಲ್ಲಿ ಎರಡನೆಯವನು ಬಕ್ಬುಕ್ಯನು, ಅವನ ಸಂಗಡ ಯೆದುತೂನನ ಮಗ, ಗಲಾಲನ ಮಗ, ಶಮ್ಮೂವನ ಮಗ ಅಬ್ದನು.</verse>
				<verse number="18">ಪರಿಶುದ್ಧ ಪಟ್ಟಣದಲ್ಲಿರುವ ಲೇವಿಯರೆಲ್ಲಾ 284 ಮಂದಿಯಾಗಿದ್ದರು.</verse>
				<verse number="19">ದ್ವಾರಪಾಲಕರು: ಅಕ್ಕೂಬನೂ, ಟಲ್ಮೋನನೂ ಬಾಗಿಲುಗಳನ್ನು ಕಾಯುವವರಾದ ಅವರ ಸಂಗಡಿಗರೂ 172 ಮಂದಿಯಾಗಿದ್ದರು.</verse>
				<verse number="20">ಇಸ್ರಾಯೇಲರ ಮಿಕ್ಕಾದ ಯಾಜಕರೂ, ಲೇವಿಯರೂ ತಮ್ಮ ತಮ್ಮ ಸ್ವಾಧೀನವಾಗಿದ್ದ ಯೆಹೂದದ ಎಲ್ಲಾ ಪಟ್ಟಣಗಳಲ್ಲಿ ವಾಸವಾಗಿದ್ದರು.</verse>
				<verse number="21">ಆದರೆ ದೇವಾಲಯದ ಸೇವಕರು ಓಫೇಲ್ ಗುಡ್ಡದಲ್ಲಿ ವಾಸವಾಗಿದ್ದರು. ಜೀಹನೂ, ಗಿಷ್ಪನೂ ಅವರ ನಾಯಕರು.</verse>
				<verse number="22">ಮೀಕನ ಮಗ, ಮತ್ತನ್ಯನ ಮಗ, ಹಷಬ್ಯನ ಮಗ, ಬಾನೀಯ ಮಗ ಉಜ್ಜೀಯು ಯೆರೂಸಲೇಮಿನಲ್ಲಿರುವ ಲೇವಿಯರ ಮೇಲ್ವಿಚಾರಕನಾಗಿದ್ದನು. ಆಸಾಫನ ವಂಶದಲ್ಲಿರುವ ಹಾಡುಗಾರನಾದ ಉಜ್ಜೀಯನು ದೇವರ ಆಲಯ ಕಾರ್ಯದ ಮೇಲೆ ಅಧಿಕಾರಿಯಾಗಿದ್ದನು.</verse>
				<verse number="23">ಏಕೆಂದರೆ ದಿನದಿನಕ್ಕೆ ಹಾಡುಗಾರರಿಗೋಸ್ಕರ ಪ್ರತಿದಿನ ಕಟ್ಟಳೆ ಇರಬೇಕೆಂದು ಅರಸನು ಅವರನ್ನು ಕುರಿತು ಆಜ್ಞಾಪಿಸಿದ್ದನು.</verse>
				<verse number="24">ಯೆಹೂದನ ಮಗ ಜೆರಹನ ಮಕ್ಕಳಲ್ಲಿ ಒಬ್ಬನಾಗಿರುವ ಮೆಷೇಜಬೇಲನ ಮಗನಾದ ಪೆತಹ್ಯನು ಜನರಿಗೋಸ್ಕರ ಸಕಲ ಕಾರ್ಯಗಳಲ್ಲಿ ಅರಸನ ಪ್ರತಿನಿಧಿಯಾಗಿದ್ದನು.</verse>
				<verse number="25">ಗ್ರಾಮಗಳಲ್ಲಿಯೂ, ಅವುಗಳ ಹೊಲಗಳಲ್ಲಿಯೂ ಇದ್ದವರು ಯಾರೆಂದರೆ: ಯೆಹೂದನ ಮಕ್ಕಳಲ್ಲಿ ಕೆಲವರು ಕಿರ್ಯತ್ ಅರ್ಬ, ಅದರ ಗ್ರಾಮಗಳಲ್ಲಿಯೂ, ದೀಬೋನ್, ಅದರ ಗ್ರಾಮಗಳಲ್ಲಿಯೂ, ಯೆಕಬ್ಜೆಯೇಲ್, ಅದರ ಗ್ರಾಮಗಳಲ್ಲಿಯೂ,</verse>
				<verse number="26">ಯೇಷೂವ ಎಂಬ ಗ್ರಾಮದಲ್ಲಿಯೂ, ಮೋಲಾದ ಗ್ರಾಮದಲ್ಲಿಯೂ, ಬೇತ್ ಪೆಲೆಟ್ ಗ್ರಾಮದಲ್ಲಿಯೂ,</verse>
				<verse number="27">ಹಚರ್ ಷೂವಾಲ್ ಗ್ರಾಮದಲ್ಲಿಯೂ, ಬೇರ್ಷೆಬ ಮತ್ತು ಅವುಗಳ ಗ್ರಾಮಗಳಲ್ಲಿಯೂ</verse>
				<verse number="28">ಚಿಕ್ಲಗ್, ಮೆಕೋನ ಮತ್ತು ಅವುಗಳ ಗ್ರಾಮಗಳಲ್ಲಿಯೂ,</verse>
				<verse number="29">ಏನ್ರಿಮ್ಮೋನ್, ಚೊರ್ಗಾ, ಯರ್ಮೂತ್ ಎಂಬ ಗ್ರಾಮಗಳಲ್ಲಿಯೂ,</verse>
				<verse number="30">ಜಾನೋಹ, ಅದುಲ್ಲಾಮ್ ಮತ್ತು ಇವುಗಳ ಗ್ರಾಮಗಳೂ ಲಾಕೀಷ್ ಊರೂ ಇದರ ಪ್ರಾಂತಗಳೂ ಅಜೇಕವೂ ಅದರ ಗ್ರಾಮಗಳೂ ಯೆಹೂದದವರ ನಿವಾಸಸ್ಥಾನಗಳು. ಅವರು ಬೇರ್ಷೆಬ ಮೊದಲುಗೊಂಡು ಹಿನ್ನೋಮ್ ತಗ್ಗಿನವರೆಗೂ ವಾಸವಾಗಿದ್ದರು.</verse>
				<verse number="31">ಇದಲ್ಲದೆ ಬೆನ್ಯಾಮೀನ್ಯರು ಗೆಬ ಮೊದಲುಗೊಂಡು ಮಿಕ್ಮಾಷಿನವರೆಗೂ ವಾಸವಾಗಿದ್ದರು. ಅಯ್ಯಾ, ಬೇತೇಲ್ ಇವುಗಳ ಗ್ರಾಮಗಳೂ,</verse>
				<verse number="32">ಅನಾತೋತ್, ನೋಬ್, ಅನನ್ಯ,</verse>
				<verse number="33">ಹಾಚೋರ್, ರಾಮಾ, ಗಿತ್ತಯಿಮ್,</verse>
				<verse number="34">ಹಾದೀದ್, ಚೆಬೋಯಿಮ್, ನೆಬಲ್ಲಾಟ್,</verse>
				<verse number="35">ಲೋದ್, ಓನೋ ಮತ್ತು ಗೇಹರಾಷೀಮ್ ಎಂಬ ಕಸಬುಗಾರರ ತಗ್ಗೂ ಇವರಿಗೆ ಇದ್ದವು.</verse>
				<verse number="36">ಯೆಹೂದದ ಲೇವಿಯರ ಕೆಲವು ವರ್ಗಗಳವರು ಬೆನ್ಯಾಮೀನಿನಲ್ಲಿಯೂ ವಾಸಿಸುತ್ತಿದ್ದರು.</verse>
			</chapter>
			<chapter number="12">
				<verse number="1">ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನ ಮತ್ತು ಯೇಷೂವನ ಸಂಗಡ ಹೋದ ಯಾಜಕರೂ ಲೇವಿಯರೂ ಯಾರೆಂದರೆ: ಸೆರಾಯ, ಯೆರೆಮೀಯ, ಎಜ್ರ,</verse>
				<verse number="2">ಅಮರ್ಯ, ಮಲ್ಲೂಕ್, ಹಟ್ಟೂಷ್,</verse>
				<verse number="3">ಶೆಕನ್ಯ, ರೆಹೂಮ್, ಮೆರೇಮೋತ್,</verse>
				<verse number="4">ಇದ್ದೋ, ಗಿನ್ನೆತೋನ್, ಅಬೀಯ,</verse>
				<verse number="5">ಮಿಯಾಮಿನ್, ಮಾದ್ಯ, ಬಿಲ್ಗ,</verse>
				<verse number="6">ಶೆಮಾಯ, ಯೋಯಾರೀಬ್, ಯೆದಾಯ,</verse>
				<verse number="7">ಸಲ್ಲೂ, ಆಮೋಕ್, ಹಿಲ್ಕೀಯ, ಯೆದಾಯ. ಇವರು ಯೇಷೂವನ ದಿವಸಗಳಲ್ಲಿ ಯಾಜಕರಲ್ಲಿಯೂ, ಅವರ ಸಂಗಡಿಗರಲ್ಲಿಯೂ ಮುಖ್ಯಸ್ಥರಾಗಿದ್ದರು.</verse>
				<verse number="8">ಲೇವಿಯರು ಯಾರೆಂದರೆ: ಯೇಷೂವ, ಬಿನ್ನೂಯ್, ಕದ್ಮಿಯೇಲ್, ಶೇರೇಬ್ಯ, ಯೆಹೂದ, ಕೃತಜ್ಞತೆಯ ಹಾಡುಗಳ ಜವಾಬ್ದಾರನಾಗಿದ್ದ ಮತ್ತನ್ಯನೂ, ಅವನ ಸಂಗಡಿಗರು.</verse>
				<verse number="9">ಇದಲ್ಲದೆ ಅವರ ಸಹೋದರರಾದ ಬಕ್ಬುಕ್ಯ, ಉನ್ನೀ ವರ್ಗಗಳಲ್ಲಿ ಅವರಿಗೆ ಎದುರುಗಡೆ ನಿಂತು ಹಾಡುತ್ತಿದ್ದರು.</verse>
				<verse number="10">ಇದಲ್ಲದೆ ಯೇಷೂವನು ಯೋಯಾಕೀಮನ ತಂದೆ, ಯೋಯಾಕೀಮನು ಎಲ್ಯಷೀಬನನ್ನು ಪಡೆದನು; ಎಲ್ಯಾಷೀಬನು ಯೋಯಾದನನ್ನು ಪಡೆದನು;</verse>
				<verse number="11">ಯೋಯಾದಾವನು ಯೋನಾತಾನನನ್ನು ಪಡೆದನು; ಯೋನಾತಾನನು ಯದ್ದೂವನನ್ನು ಪಡೆದನು.</verse>
				<verse number="12">ಯೋಯಾಕೀಮನ ಕಾಲದಲ್ಲಿ ಅವನ ಪಿತೃಗಳಲ್ಲಿ ಮುಖ್ಯಸ್ಥರಾಗಿದ್ದ ಯಾಜಕರು ಯಾರೆಂದರೆ: ಸೆರಾಯನ ವಂಶದವನಾದ ಮೆರಾಯನು, ಯೆರೆಮೀಯನ ವಂಶದವನಾದ ಹನನ್ಯಯನು,</verse>
				<verse number="13">ಎಜ್ರನ ವಂಶದವನಾದ ಮೆಷುಲ್ಲಾಮನು, ಅಮರ್ಯನ ವಂಶದವನಾದ ಯೆಹೋಹಾನಾನನು,</verse>
				<verse number="14">ಮಲ್ಲೂಕಿಯ ವಂಶದವನಾದ ಯೋನಾತಾನನು, ಶೆಬನ್ಯನ ವಂಶದವನಾದ ಯೋಸೇಫನು,</verse>
				<verse number="15">ಹಾರಿಮನ ವಂಶದವನಾದ ಅದ್ನನು, ಮೆರಾಯೋತನ ವಂಶದವನಾದ ಹೆಲ್ಕಾಯನು,</verse>
				<verse number="16">ಇದ್ದೋವಿನ ವಂಶದವನಾದ ಜೆಕರ್ಯನು, ಗಿನ್ನೆತೋನನ ವಂಶದವನಾದ ಮೆಷುಲ್ಲಾಮನು,</verse>
				<verse number="17">ಅಬೀಯನ ವಂಶದವನಾದ ಜಿಕ್ರಿಯು, ಮಿನ್ಯಾಮೀನನ, ಮೋವಾದ್ಯನ ವಂಶದವನಾದ ಪಿಲ್ಟೈ,</verse>
				<verse number="18">ಬಿಲ್ಗನ ವಂಶದವನಾದ ಶಮ್ಮೂವನು, ಶೆಮಾಯನ ವಂಶದವನಾದ ಯೆಹೋನಾತಾನನು,</verse>
				<verse number="19">ಯೋಯಾರೀಬನ ವಂಶದವನಾದ ಮತ್ತೆನೈ, ಯೆದಾಯನ ವಂಶದವನಾದ ಉಜ್ಜೀ,</verse>
				<verse number="20">ಸಲ್ಲೂ ವಂಶದವನಾದ ಕಲ್ಲಾಯನು, ಆಮೋಕನ ವಂಶದವನಾದ ಏಬೆರನು,</verse>
				<verse number="21">ಹಿಲ್ಕೀಯನ ವಂಶದವನಾದ ಹಷಬ್ಯನು, ಯೆದಾಯನ ವಂಶದವನಾದ ನೆತನೆಯೇಲನು.</verse>
				<verse number="22">ಎಲ್ಯಾಷೀಬ್, ಯೋಯಾದ, ಯೋಹಾನಾನ್, ಯದ್ದೂವ, ಇವರ ದಿವಸಗಳಲ್ಲಿ ಲೇವಿಯರೂ, ಯಾಜಕರೂ, ಪಾರಸಿಯನಾದ ದಾರ್ಯಾವೆಷನ ಆಳಿಕೆಯವರೆಗೆ ಪಿತೃಗಳ ಮುಖ್ಯಸ್ಥರಾಗಿ ಬರೆಯಲಾಗಿದೆ.</verse>
				<verse number="23">ಎಲ್ಯಾಷೀಬನ ಮಗನಾದ ಯೋಹಾನಾನನ ಕಾಲದವರೆಗೆ ಲೇವಿ ಎಂಬವನ ಪುತ್ರರಾದ ಪಿತೃಗಳ ಮುಖ್ಯಸ್ಥರು ಇತಿಹಾಸ ಗ್ರಂಥದಲ್ಲಿ ಬರೆದಿರುತ್ತದೆ.</verse>
				<verse number="24">ಲೇವಿಯರ ಮುಖ್ಯಸ್ಥರಾದ ಹಷಬ್ಯನೂ, ಶೇರೇಬ್ಯನೂ; ಕದ್ಮಿಯೇಲನ ಮಗನಾದ ಯೇಷೂವನೂ, ಅವರಿಗೆ ಎದುರಾದ ತಂಡವಾಗಿ ನಿಂತ ಅವರ ಸಹೋದರರೂ, ದೇವರ ಮನುಷ್ಯನಾದ ದಾವೀದನ ಆಜ್ಞೆಯ ಪ್ರಕಾರ ಕೃತಜ್ಞತಾಸ್ತುತಿ ಮಾಡುವುದಕ್ಕೆ ವರ್ಗ ವರ್ಗಗಳಾಗಿದ್ದರು.</verse>
				<verse number="25">ಮತ್ತನ್ಯನೂ, ಬಕ್ಬುಕ್ಯನೂ, ಓಬದ್ಯನೂ, ಮೆಷುಲ್ಲಾಮನೂ, ಟಲ್ಮೋನನೂ, ಅಕ್ಕೂಬನೂ ಬೊಕ್ಕಸಗಳ ಬಾಗಿಲುಗಳನ್ನು ಕಾಯುವವರಾಗಿದ್ದರು.</verse>
				<verse number="26">ಯೋಚಾದಾಕನ ಮಗ ಯೇಷೂವನ ಮಗ ಯೋಯಾಕೀಮನ ದಿವಸಗಳಲ್ಲಿಯೂ; ರಾಜ್ಯಪಾಲನಾದ ನೆಹೆಮೀಯನ ದಿವಸಗಳಲ್ಲಿಯೂ; ನಿಯಮಶಾಸ್ತ್ರಿಯೂ, ಯಾಜಕನೂ ಆದ ಎಜ್ರನ ದಿವಸಗಳಲ್ಲಿಯೂ ಇವರು ಇದ್ದರು.</verse>
				<verse number="27">ಯೆರೂಸಲೇಮಿನ ಗೋಡೆಯನ್ನು ಪ್ರತಿಷ್ಠೆ ಮಾಡುವಾಗ ಸ್ತುತಿಗಳಿಂದಲೂ, ಹಾಡುವುದರಿಂದಲೂ, ತಾಳಗಳಿಂದಲೂ, ವೀಣೆಗಳಿಂದಲೂ, ಕಿನ್ನರಿಗಳಿಂದಲೂ ಪ್ರತಿಷ್ಠೆಯನ್ನು ಸಂತೋಷವಾಗಿ ಆಚರಿಸುವುದಕ್ಕೆ ಲೇವಿಯರನ್ನು ಯೆರೂಸಲೇಮಿಗೆ ಬರಮಾಡುವ ನಿಮಿತ್ತವಾಗಿ ಅವರನ್ನು ಅವರ ಸಮಸ್ತ ಸ್ಥಳಗಳಲ್ಲಿ ಹುಡುಕಿದರು.</verse>
				<verse number="28">ಹಾಡುಗಾರರ ಮಕ್ಕಳು ಯೆರೂಸಲೇಮಿನ ಸುತ್ತಲಿರುವ ಬಯಲಿನಿಂದಲೂ, ನೆಟೋಫಾತ್ಯರ ಗ್ರಾಮಗಳಿಂದಲೂ,</verse>
				<verse number="29">ಬೇತ್ ಗಿಲ್ಗಾಲ್ ಊರಿಂದಲೂ, ಗೆಬದ ಅಜ್ಮಾವೆತಿನ ಹೊಲಗಳಿಂದಲೂ ಕೂಡಿಕೊಂಡರು. ಹಾಡುಗಾರರು ತಮಗೋಸ್ಕರ ಯೆರೂಸಲೇಮಿನ ಸುತ್ತಲೂ ಗ್ರಾಮಗಳನ್ನು ಕಟ್ಟಿಸಿಕೊಂಡಿದ್ದರು.</verse>
				<verse number="30">ಯಾಜಕರೂ, ಲೇವಿಯರೂ ತಮ್ಮನ್ನು ಶುದ್ಧ ಮಾಡಿಕೊಂಡು ಜನರನ್ನೂ, ಬಾಗಿಲುಗಳನ್ನೂ, ಗೋಡೆಯನ್ನೂ ಶುದ್ಧ ಮಾಡಿದರು.</verse>
				<verse number="31">ಆಗ ನಾನು ಯೆಹೂದದ ಪ್ರಧಾನರನ್ನು ಗೋಡೆಯ ಮೇಲೆ ಬರಮಾಡಿ, ಸ್ತುತಿಸಲು ಎರಡು ಗುಂಪುಗಳನ್ನು ನೇಮಿಸಿದೆನು. ಒಂದು ಗುಂಪಿನವರು ಗೋಡೆಯ ಮೇಲೆ ಬಲಗಡೆಯಿಂದ ತಿಪ್ಪೆ ಬಾಗಿಲ ಕಡೆಗೆ ಹೋದರು.</verse>
				<verse number="32">ಅವರ ಹಿಂಭಾಗದಲ್ಲಿ ಹೋಷಾಯನೂ, ಯೆಹೂದದ ಪ್ರಧಾನರಲ್ಲಿ ಅರ್ಧ ಜನರೂ,</verse>
				<verse number="33">ಅಜರ್ಯನೂ, ಎಜ್ರನೂ, ಮೆಷುಲ್ಲಾಮನೂ,</verse>
				<verse number="34">ಯೆಹೂದನೂ, ಬೆನ್ಯಾಮೀನನೂ, ಶೆಮಾಯನೂ, ಯೆರೆಮೀಯನೂ;</verse>
				<verse number="35">ತುತೂರಿಗಳನ್ನು ಹಿಡಿಯುವ ಯಾಜಕರ ಮಕ್ಕಳಲ್ಲಿ ಆಸಾಫನ ಮಗ ಜಕ್ಕೂರನ ಮಗ, ಮೀಕಾಯನ ಮಗ, ಮತ್ತನ್ಯನ ಮಗ, ಶೆಮಾಯನ ಮಗ, ಯೋನಾತಾನನ ಮಗ ಜೆಕರ್ಯನೂ,</verse>
				<verse number="36">ದೇವರ ಮನುಷ್ಯನಾದ ದಾವೀದನ ಗೀತವಾದ್ಯಗಳನ್ನು ಹಿಡಿಯುವ ಜೆಕರೀಯನ ಸಹೋದರರಾದ ಶೆಮಾಯ, ಅಜರಯೇಲ್, ಮಿಲಲೈ, ಗಿಲಲೈ, ಮಾಯೈ, ನೆತನೆಯೇಲ್, ಯೆಹೂದ, ಹನಾನೀ ಎಂಬವರು ನಡೆದರು; ನಿಯಮಶಾಸ್ತ್ರಿಯಾದ ಎಜ್ರನು ಇವರ ಮುಂದೆ ನಡೆದನು.</verse>
				<verse number="37">ತಮಗೆ ಎದುರಾದ ಬುಗ್ಗೆಯ ಬಾಗಿಲಿಗೆ ಬಂದಾಗ ಗೋಡೆಯಲ್ಲಿ ಎತ್ತರವಾದ ದಾವೀದನ ಪಟ್ಟಣದ ಮೆಟ್ಟಿಲುಗಳಿಂದ ದಾವೀದನ ಅರಮನೆಯ ಮೇಲೆ ಪೂರ್ವದ ಕಡೆಗಿರುವ ನೀರಿನ ಬಾಗಿಲಿಗೆ ಹೋದರು.</verse>
				<verse number="38">ಸ್ತುತಿಸುವ ಮತ್ತೊಂದು ಭಜನಾ ಮಂಡಳಿ ಅವರಿಗೆದುರಾಗಿ ನಡೆದರು. ನಾನು ಅವರ ಹಿಂದೆ ನಡೆದೆನು. ಗೋಡೆಯ ಮೇಲೆ ಇದ್ದ ಅರ್ಧ ಜನರು ಬುರುಜುಗಳ ಗೋಪುರದ ಆಚೆಯಿಂದ ನಡೆದು, ಅಗಲವಾದ ಗೋಡೆಯನ್ನು,</verse>
				<verse number="39">ಎಫ್ರಾಯೀಮ್ ಬಾಗಿಲ ಮೇಲೆಯೂ, ಯೆಷಾನಾ ಬಾಗಿಲ ಮೇಲೆಯೂ, ಮೀನು ಬಾಗಿಲ ಮೇಲೆಯೂ ಹಾದು, ಹನನೇಲ್ ಗೋಪುರವನ್ನೂ, ಶತ ಗೋಪುರವನ್ನೂ ದಾಟಿ, ಕುರಿ ಬಾಗಿಲವರೆಗೆ ಬಂದು ಸೆರೆಮನೆಯ ಬಾಗಿಲ ಬಳಿಯಲ್ಲಿ ನಿಂತರು.</verse>
				<verse number="40">ಸ್ತುತಿ ಮಾಡುವ ಎರಡು ಗುಂಪುಗಳೂ, ನಾನೂ, ನನ್ನ ಸಂಗಡ ಇದ್ದ ಅರ್ಧಮಂದಿ ಅಧಿಕಾರಿಗಳೂ ದೇವರ ಆಲಯದಲ್ಲಿ ನಿಂತಿದ್ದೆವು.</verse>
				<verse number="41">ಆಗ ಯಾಜಕರಾದ ಎಲ್ಯಾಕೀಮನೂ, ಮಾಸೇಯನೂ, ಮಿನ್ಯಾಮೀನನೂ, ಮೀಕಾಯನೂ, ಎಲ್ಯೋವೇನೈನೂ, ಜೆಕರ್ಯನೂ, ಹನನ್ಯನೂ, ತುತೂರಿಗಳನ್ನು ಹಿಡಿದುಕೊಂಡವರೂ;</verse>
				<verse number="42">ಮಾಸೇಯನೂ, ಶೆಮಾಯನೂ, ಎಲಿಯಾಜರನೂ, ಉಜ್ಜೀಯೂ, ಯೆಹೋಹಾನಾನನೂ, ಮಲ್ಕೀಯನೂ, ಏಲಾಮನೂ, ಏಜೆರನೂ, ತಮ್ಮ ಮೇಲ್ವಿಚಾರಕನಾದ ಯೆಜ್ರಾಹ್ಯನ ಸಂಗಡ ಹಾಡುಗಾರರು ಗಟ್ಟಿಯಾಗಿ ಹಾಡಿದರು.</verse>
				<verse number="43">ಆ ದಿವಸದಲ್ಲಿ ಮಹಾಬಲಿಗಳನ್ನು ಅರ್ಪಿಸಿ, ದೇವರು ಅವರನ್ನು ಮಹಾ ಸಂತೋಷದಿಂದ ಸಂತೋಷಿಸಲು ಮಾಡಿದ್ದರಿಂದ ಅವರು ಸಂತೋಷಪಟ್ಟರು. ಇದಲ್ಲದೆ ಅವರು ತಮ್ಮ ಮಡದಿಮಕ್ಕಳೂಡನೆ ಮಹೋತ್ಸವ ಮಾಡಿದರು. ಆದ್ದರಿಂದ ಯೆರೂಸಲೇಮಿನ ಸಂತೋಷ ಧ್ವನಿಯು ಬಹು ದೂರಕ್ಕೆ ಕೇಳಿಸಿತು.</verse>
				<verse number="44">ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ, ಲೇವಿಯರಿಗೋಸ್ಕರವೂ ಮೋಶೆಯ ನಿಯಮದಲ್ಲಿ ನೇಮಕವಾದ ಪ್ರಕಾರ, ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ, ಬೊಕ್ಕಸಗಳನ್ನೂ, ಕಾಣಿಕೆಗಳನ್ನೂ, ಪ್ರಥಮ ಫಲಗಳನ್ನೂ, ಹತ್ತನೆಯ ಪಾಲುಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು. ಏಕೆಂದರೆ ಸೇವೆಮಾಡುತ್ತಿದ್ದ ಯಾಜಕರನ್ನೂ, ಲೇವಿಯರನ್ನೂ ಕುರಿತು ಯೆಹೂದದವರು ಬಹು ಸಂತೋಷಪಟ್ಟರು.</verse>
				<verse number="45">ಇದಲ್ಲದೆ ದಾವೀದನೂ, ಅವನ ಮಗನಾದ ಸೊಲೊಮೋನನೂ ಕೊಟ್ಟ ಆಜ್ಞೆಯ ಪ್ರಕಾರ ಹಾಡುಗಾರರೂ, ದ್ವಾರಪಾಲಕರೂ ತಮ್ಮ ದೇವರ ಕಾವಲನ್ನೂ, ಶುದ್ಧೀಕರಣದ ಕಾವಲನ್ನೂ ಕಾಯುತ್ತಿದ್ದರು.</verse>
				<verse number="46">ಏಕೆಂದರೆ ದಾವೀದನ ಮತ್ತು ಆಸಾಫನ ಕಾಲದಲ್ಲಿಯೇ ದೇವರಿಗೆ ಸ್ತೋತ್ರವನ್ನೂ, ಕೃತಜ್ಞತೆಯನ್ನೂ ಹಾಡತಕ್ಕ ಹಾಡುಗಾರರಲ್ಲಿ ಮುಖ್ಯಸ್ಥರಿದ್ದರು.</verse>
				<verse number="47">ಆದ್ದರಿಂದ ಜೆರುಬ್ಬಾಬೆಲನ ದಿವಸಗಳಲ್ಲಿಯೂ, ನೆಹೆಮೀಯನ ದಿವಸಗಳಲ್ಲಿಯೂ ಇಸ್ರಾಯೇಲರೆಲ್ಲರು ಹಾಡುಗಾರರಿಗೂ, ದ್ವಾರಪಾಲಕರಿಗೂ, ನಿತ್ಯದ ಕಟ್ಟಳೆಯಾದ ಅವರವರ ಪಾಲನ್ನು ಕೊಟ್ಟರು. ಇದಲ್ಲದೆ ಅವರು ಇತರ ಲೇವಿಯರಿಗೆ ಭಾಗವನ್ನು ಪ್ರತ್ಯೇಕವಾಗಿಟ್ಟರು ಮತ್ತು ಲೇವಿಯರು ಆರೋನನ ವಂಶಸ್ಥರಿಗೆ ಭಾಗವನ್ನು ಪ್ರತ್ಯೇಕವಾಗಿಟ್ಟರು.</verse>
			</chapter>
			<chapter number="13">
				<verse number="1">ಅದೇ ದಿವಸದಲ್ಲಿ ಜನರು ಕೇಳುವಂತೆ ಮೋಶೆಯ ನಿಯಮ ಗ್ರಂಥವನ್ನು ಗಟ್ಟಿಯಾಗಿ ಓದುವಾಗ, “ಅಮ್ಮೋನಿಯರೂ, ಮೋವಾಬ್ಯರೂ ಎಂದಿಗೂ ದೇವರ ಸಭೆಗೆ ಬರಕೂಡದು,” ಎಂದು ಅದರಲ್ಲಿ ಬರೆದದ್ದು ಸಿಕ್ಕಿತು.</verse>
				<verse number="2">ಏಕೆಂದರೆ ಅವರು ಅನ್ನಪಾನಗಳೊಡನೆ ಇಸ್ರಾಯೇಲರನ್ನು ಎದುರುಗೊಳ್ಳಲಿಲ್ಲ. ಅವರು ಇಸ್ರಾಯೇಲರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣಕೊಟ್ಟು ಕರೆಸಿದ್ದರು. ಆದರೆ ನಮ್ಮ ದೇವರು ಆ ಶಾಪವನ್ನು ಆಶೀರ್ವಾದವಾಗಿ ಮಾಡಿದರು.</verse>
				<verse number="3">ಆಗ ಜನರು ದೇವರ ನಿಯಮವನ್ನು ಕೇಳಿದಾಗ, ಇಸ್ರಾಯೇಲರೊಳಗಿಂದ ವಿದೇಶಿ ಜನರನ್ನು ಪ್ರತ್ಯೇಕಿಸಿದರು.</verse>
				<verse number="4">ಇದಕ್ಕೆ ಮುಂಚೆ ನಮ್ಮ ದೇವರ ಆಲಯದ ಉಗ್ರಾಣದ ಮೇಲೆ ವಿಚಾರಕನಾಗಿದ್ದ ಎಲ್ಯಾಷೀಬನೆಂಬ ಯಾಜಕನು ಟೋಬೀಯನ ಸಮೀಪ ಬಂಧುವಾಗಿದ್ದನು.</verse>
				<verse number="5">ಲೇವಿಯರಿಗೂ, ಹಾಡುಗಾರರಿಗೂ, ದ್ವಾರಪಾಲಕರಿಗೂ ನೇಮಕವಾದ ಕಾಣಿಕೆಗಳನ್ನೂ, ಧೂಪವನ್ನೂ, ಸಾಮಗ್ರಿಗಳನ್ನೂ, ಧಾನ್ಯದ ಹತ್ತನೆಯ ಪಾಲುಗಳನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ, ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇಡುತ್ತಿದ್ದ ದೊಡ್ಡ ಕೊಠಡಿಯನ್ನು ಎಲ್ಯಾಷೀಬನು ಟೋಬೀಯನಿಗೋಸ್ಕರ ಸಿದ್ಧ ಮಾಡಿಕೊಟ್ಟಿದ್ದನು.</verse>
				<verse number="6">ಆದರೆ ಇವೆಲ್ಲಾ ಸಂಭವಿಸುವಾಗ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ. ಬಾಬಿಲೋನಿನ ಅರಸನಾದ ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ನಾನು ಅರಸನ ಬಳಿಗೆ ಹೋಗಿದ್ದೆ. ತರುವಾಯ ನಾನು ಅರಸನಿಂದ ಅಪ್ಪಣೆ ಪಡೆದುಕೊಂಡು,</verse>
				<verse number="7">ನಾನು ಯೆರೂಸಲೇಮಿಗೆ ಬಂದು ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವರ ಆಲಯದ ಅಂಗಳಗಳಲ್ಲಿ ಒಂದು ಕೊಠಡಿಯನ್ನು ಸಿದ್ಧಮಾಡಿಕೊಟ್ಟಿದ್ದನ್ನು ನಾನು ಕಂಡಾಗ, ಅದು ನನಗೆ ಬಹಳ ವ್ಯಸನಕರವಾಯಿತು.</verse>
				<verse number="8">ಆ ಕೊಠಡಿಯೊಳಗಿಂದ ಟೋಬೀಯನ ವಸ್ತುಗಳನ್ನೆಲ್ಲಾ ಹೊರಗೆ ಹಾಕಿಸಿದೆನು.</verse>
				<verse number="9">ಆಗ ನಾನು ಹೇಳಿದ್ದರಿಂದ ಅವರು ಕೊಠಡಿಗಳನ್ನು ಶುದ್ಧ ಮಾಡಿದರು. ತರುವಾಯ ದೇವರ ಆಲಯದ ಪಾತ್ರೆಗಳನ್ನೂ ಧಾನ್ಯ ಸಮರ್ಪಣೆಗಳನ್ನೂ, ಧೂಪವನ್ನೂ ತಿರುಗಿ ಅಲ್ಲಿ ತಂದು ಇಡಿಸಿದೆನು.</verse>
				<verse number="10">ಲೇವಿಯರ ಪಾಲನ್ನು ಅವರಿಗೆ ಕೊಡಲಿಲ್ಲವೆಂದು ನನಗೆ ತಿಳಿಯಿತು. ಸೇವೆಯನ್ನು ಮಾಡುವ ಲೇವಿಯರೂ, ಹಾಡುಗಾರರೂ ತಮ್ಮ ತಮ್ಮ ಹೊಲಕ್ಕೆ ಓಡಿ ಹೋಗುತ್ತಿದ್ದರು.</verse>
				<verse number="11">ಆಗ ನಾನು ಅಧಿಕಾರಿಗಳನ್ನು ಗದರಿಸಿ ಅವರಿಗೆ, “ದೇವರ ಮಂದಿರವನ್ನು ಅಲಕ್ಷ್ಯಮಾಡಿದ್ದೇಕೆ?” ಎಂದು ವಾದಿಸಿದೆನು. ಬಿಟ್ಟುಹೋದವರನ್ನು ತಿರಿಗಿ ಕರೆಯಿಸಿ, ಅವರನ್ನು ಅವರವರ ಉದ್ಯೋಗಗಳಲ್ಲಿ ಇರಿಸಿದೆನು.</verse>
				<verse number="12">ಆಗ ಯೆಹೂದದವರೆಲ್ಲರು ಧಾನ್ಯ, ಹೊಸ ದ್ರಾಕ್ಷಾರಸ ಎಣ್ಣೆ ಇವುಗಳಲ್ಲಿ ಹತ್ತರಲ್ಲೊಂದು ಪಾಲನ್ನು ಕೊಠಡಿಗಳಲ್ಲಿ ತಂದರು.</verse>
				<verse number="13">ಆಗ ನಾನು ಯಾಜಕನಾದ ಶೆಲೆಮ್ಯನನ್ನೂ, ಲೇಖಕನಾದ ಚಾದೋಕನನ್ನೂ, ಲೇವಿಯರಲ್ಲಿರುವ ಪೆದಾಯನನ್ನೂ ಅವರಿಗೆ ಸಹಾಯವಾಗಿ ಮತ್ತನ್ಯನ ಮಗನಾದ ಜಕ್ಕೂರನ ಮಗ ಹಾನಾನನನ್ನೂ ಬೊಕ್ಕಸಗಳ ಮೇಲೆ ನೇಮಿಸಿದೆನು. ಅವರು ನಂಬಿಗಸ್ತರೆಂದು ಹೆಸರುಗೊಂಡವರು. ತಮ್ಮ ಸಹೋದರರಿಗೆ ಹಂಚಿ ಕೊಡುವುದು ಅವರ ಕೆಲಸವಾಗಿತ್ತು.</verse>
				<verse number="14">ನನ್ನ ದೇವರೇ, ಇದಕ್ಕಾಗಿ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ. ನಾನು ನನ್ನ ದೇವರ ಆಲಯಕ್ಕೋಸ್ಕರವೂ, ಅದರ ಸೇವೆಗೋಸ್ಕರವೂ ನಂಬಿಗಸ್ತಿಕೆಯಿಂದ ಮಾಡಿದ ಭಕ್ತಿಕಾರ್ಯಗಳನ್ನು ಅಳಿಸಿಬಿಡಬೇಡಿರಿ.</verse>
				<verse number="15">ಆ ದಿನಗಳಲ್ಲಿ ನಾನು ಯೆಹೂದದೊಳಗೆ ಸಬ್ಬತ್ ದಿನಗಳಲ್ಲಿ ಕೆಲವರು ದ್ರಾಕ್ಷಿಯ ಆಲೆಗಳಲ್ಲಿ ಕೆಲಸಮಾಡುವುದನ್ನೂ, ಸಿವುಡುಗಳನ್ನು ತರುವುದನ್ನೂ, ಕತ್ತೆಗಳ ಮೇಲೆ ಹೇರಿಕೊಂಡು ಬರುವುದನ್ನೂ ಮತ್ತು ಸಬ್ಬತ್ ದಿನಗಳಲ್ಲಿ ಯೆರೂಸಲೇಮಿಗೆ ದ್ರಾಕ್ಷಾರಸವನ್ನೂ, ದ್ರಾಕ್ಷಿಹಣ್ಣುಗಳನ್ನೂ, ಅಂಜೂರದ ಹಣ್ಣುಗಳನ್ನೂ, ಎಲ್ಲಾ ಹೊರೆಗಳನ್ನೂ ತರುವುದನ್ನು ನಾನು ಕಂಡೆನು. ಆದ್ದರಿಂದ, ವಿಶ್ರಾಂತಿಯ ದಿನದಲ್ಲಿ ಮಾರುವುದರ ವಿರೋಧವಾಗಿ ನಾನು ಎಚ್ಚರಿಸಿದೆನು.</verse>
				<verse number="16">ಇದಲ್ಲದೆ ಮೀನುಗಳನ್ನೂ, ಎಲ್ಲಾ ಸರಕುಗಳನ್ನೂ ತೆಗೆದುಕೊಂಡು ಬಂದು ಸಬ್ಬತ್ ದಿನದಲ್ಲಿ ಯೆಹೂದದ ಮಕ್ಕಳಿಗೆ ಮಾರುವ ಟೈರಿನವರು ಯೆರೂಸಲೇಮಿನಲ್ಲಿ ವಾಸವಾಗಿದ್ದರು.</verse>
				<verse number="17">ಆಗ ನಾನು ಯೆಹೂದದ ಶ್ರೇಷ್ಠರನ್ನು ಗದರಿಸಿ ಅವರಿಗೆ, “ಸಬ್ಬತ್ ದಿನವನ್ನು ನೀವು ಅಪವಿತ್ರ ಮಾಡುವ ಈ ಕೆಟ್ಟ ಕಾರ್ಯವೇನು?</verse>
				<verse number="18">ನಿಮ್ಮ ತಂದೆಗಳು ಈ ಪ್ರಕಾರ ಮಾಡಿದ್ದರಿಂದ, ನಮ್ಮ ದೇವರು ನಮ್ಮ ಮೇಲೆಯೂ, ಪಟ್ಟಣದ ಮೇಲೆಯೂ ಈ ಕೇಡನ್ನೆಲ್ಲಾ ಬರಮಾಡಲಿಲ್ಲವೋ? ಆದರೆ ನೀವು ಸಬ್ಬತ್ ದಿನವನ್ನು ಅಪವಿತ್ರ ಮಾಡುವುದರಿಂದ ಇಸ್ರಾಯೇಲಿನ ಮೇಲೆ ಇನ್ನೂ ದೇವರ ಕೋಪವನ್ನು ಬರಮಾಡುವಿರಿ.”</verse>
				<verse number="19">ಸಬ್ಬತ್ ದಿನಕ್ಕೆ ಮುಂಚೆ ಯೆರೂಸಲೇಮಿನ ಬಾಗಿಲುಗಳಲ್ಲಿ ಕತ್ತಲಾಗಲಾರಂಭಿಸಿದಾಗ ಬಾಗಿಲುಗಳನ್ನು ಹಾಕುವ ಹಾಗೆಯೂ, ಸಬ್ಬತ್ ದಿನವು ತೀರುವವರೆಗೆ ಅವುಗಳನ್ನು ತೆರೆಯದೆ ಇರುವ ಹಾಗೆಯೂ ನಾನು ಅವರಿಗೆ ಹೇಳಿದೆನು. ಸಬ್ಬತ್ ದಿನದಲ್ಲಿ ಹೊರೆ ಏನಾದರೂ ಒಳಗೆ ತರದ ಹಾಗೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಇಟ್ಟೆನು.</verse>
				<verse number="20">ಆಗ ವರ್ತಕರೂ, ಎಲ್ಲಾ ಸರಕುಗಳನ್ನು ಮಾರುವವರೂ ಒಂದೆರಡು ಸಾರಿ ಯೆರೂಸಲೇಮಿನ ಹೊರಗೆ ರಾತ್ರಿಯನ್ನು ಕಳೆದರು.</verse>
				<verse number="21">ಆಗ ನಾನು ಅವರನ್ನು ಗದರಿಸಿ ಅವರಿಗೆ, “ನೀವು ಕೋಟೆಯ ಗೋಡೆಯ ಹೊರಗೆ ಏಕೆ ಇಳುಕೊಂಡಿದ್ದೀರಿ? ನೀವು ಇನ್ನು ಮೇಲೆ ಹಾಗೆ ಮಾಡಿದರೆ ನಿಮ್ಮನ್ನು ಸೆರೆಗೆ ಹಾಕುವೆನು,” ಎಂದೆನು. ಆ ದಿನದಿಂದ ಅವರು ಸಬ್ಬತ್ ದಿನದಲ್ಲಿ ಬರಲೇ ಇಲ್ಲ.</verse>
				<verse number="22">ಆಗ ಲೇವಿಯರು ತಮ್ಮನ್ನು ಶುಚಿ ಮಾಡಿಕೊಂಡು ಬಂದು ಸಬ್ಬತ್ ದಿನವನ್ನು ಪರಿಶುದ್ಧವಾಗಿ ಆಚರಿಸಬೇಕೆಂದೂ, ಬಾಗಿಲುಗಳನ್ನು ಕಾಯಬೇಕೆಂದೂ ಅವರಿಗೆ ಹೇಳಿದೆನು. ನನ್ನ ದೇವರೇ, ಇದಕ್ಕಾಗಿ ಸಹ ನೀವು ನನ್ನನ್ನು ನೆನಸಿ, ನಿಮ್ಮ ಮಹಾ ಪ್ರೀತಿಯ ಪ್ರಕಾರ ನನ್ನನ್ನು ಕರುಣಿಸಿರಿ.</verse>
				<verse number="23">ಆ ದಿನಗಳಲ್ಲಿ ಅಮ್ಮೋನ್, ಮೋವಾಬ್, ಅಷ್ಡೋದ್ ಎಂಬ ದೇಶಗಳ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕಂಡೆನು.</verse>
				<verse number="24">ಇವರ ಮಕ್ಕಳು ಅರ್ಧಮಂದಿ ಯೆಹೂದ್ಯರ ಭಾಷೆಯಲ್ಲಿ ಮಾತಾಡಲು ತಿಳಿಯದೆ, ಅಷ್ಡೋದ್ಯರ ಮತ್ತು ಬೇರೆ ಭಾಷೆಯನ್ನಾಡುತ್ತಾರೆ ಎಂದು ತಿಳಿಯಿತು.</verse>
				<verse number="25">ಆಗ ನಾನು ಅವರನ್ನು ಗದರಿಸಿ, ಶಪಿಸಿ, ಅವರಲ್ಲಿ ಕೆಲವರನ್ನು ಹೊಡೆದು, ಅವರ ಕೂದಲನ್ನು ಕಿತ್ತು, “ನೀವು ನಿಮ್ಮ ಪುತ್ರಿಯರನ್ನು ಅವರ ಪುತ್ರರಿಗೂ, ಅವರ ಪುತ್ರಿಯರನ್ನು ನಿಮ್ಮ ಪುತ್ರರಿಗೂ, ಮದುವೆಮಾಡಿಕೊಡಬೇಡಿರಿ, ಎಂದು ದೇವರ ಹೆಸರಿನಲ್ಲಿ ಅವರಿಂದ ಪ್ರಮಾಣಮಾಡಿಸಿದೆನು.</verse>
				<verse number="26">ಇಸ್ರಾಯೇಲಿನ ಅರಸನಾದ ಸೊಲೊಮೋನನು ಇಂತಹ ಮದುವೆಗಳಿಂದ ಪಾಪ ಮಾಡಿದನಲ್ಲವೇ? ಅನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನು ಇರಲಿಲ್ಲ, ಅವನು ತನ್ನ ದೇವರಿಗೆ ವಿಶೇಷಪ್ರಿಯನಾಗಿದ್ದನು, ಆದ್ದರಿಂದಲೇ ದೇವರು ಅವನನ್ನು ಎಲ್ಲ ಇಸ್ರಾಯೇಲರ ಮೇಲೆ ಅರಸನನ್ನಾಗಿ ನೇಮಿಸಿದರು. ಆದರೂ ವಿದೇಶಿ ಸ್ತ್ರೀಯರು ಅವನನ್ನು ಕೂಡ ಪಾಪಮಾಡುವ ಹಾಗೆ ಮಾಡಿದರು.</verse>
				<verse number="27">ನೀವು ವಿದೇಶಿ ಸ್ತ್ರೀಯರನ್ನು ಮದುವೆಮಾಡಿಕೊಂಡು, ನಮ್ಮ ದೇವರಿಗೆ ಅಪರಾಧಮಾಡಿ, ಅದೇ ಘೋರವಾದ ದುಷ್ಕೃತ್ಯವನ್ನು ಮಾಡಲು ನಾವು ಒಪ್ಪಿಕೊಳ್ಳುವುದಿಲ್ಲ ನಿಮ್ಮ ಮಾತು ಕೇಳಬಹುದೋ?” ಎಂದು ಗದರಿಸಿದೆನು.</verse>
				<verse number="28">ಮಹಾಯಾಜಕನಾದ ಎಲ್ಯಾಷೀಬನ ಮಗ ಯೋಯಾದನ ಮಕ್ಕಳಲ್ಲಿ ಒಬ್ಬನು ಹೋರೋನಿನವನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು.</verse>
				<verse number="29">ನನ್ನ ದೇವರೇ, ಅವರು ಯಾಜಕತ್ವವನ್ನೂ, ಯಾಜಕರ ಮತ್ತು ಲೇವಿಯರ ಒಡಂಬಡಿಕೆಯನ್ನೂ, ಅಶುದ್ಧ ಮಾಡಿದ್ದಾರೆ; ಇದನ್ನು ನೆನಪುಮಾಡಿಕೊಳ್ಳಿರಿ.</verse>
				<verse number="30">ಹೀಗೆಯೇ ನಾನು ಅವರನ್ನು ಇತರ ಜನರಿಂದ ಬಿಡಿಸಿ, ಶುದ್ಧಪಡಿಸಿದೆ. ಯಾಜಕರಿಗೂ, ಲೇವಿಯರಿಗೂ, ಅವರವರ ಕೆಲಸದ ಪ್ರಕಾರ,</verse>
				<verse number="31">ನೇಮಿತ ಕಾಲದಲ್ಲಿ ಸಲ್ಲತಕ್ಕ ಅರ್ಪಣೆಯ ಕಟ್ಟಿಗೆಗಳನ್ನೂ, ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ಇದನ್ನು ಸಹ ನನ್ನ ಮೇಲಿನ ನಿಮ್ಮ ದಯೆಯೊಂದಿಗೆ ನನ್ನನ್ನು ನೆನಪುಮಾಡಿಕೊಳ್ಳಿರಿ.</verse>
			</chapter>
		</book>
		<book number="17">
			<chapter number="1">
				<verse number="1">ಭಾರತ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗಿನ ನೂರ ಇಪ್ಪತ್ತೇಳು ಸಂಸ್ಥಾನಗಳನ್ನು ಅಹಷ್ವೇರೋಷನು ಆಳುತ್ತಿದ್ದನು.</verse>
				<verse number="2">ಆ ದಿವಸಗಳಲ್ಲಿ ಅರಸನಾದ ಅಹಷ್ವೇರೋಷನು ರಾಜಧಾನಿಯಾದ ಶೂಷನಿನಲ್ಲಿ ಅರಮನೆಯಲ್ಲಿರುವ ತನ್ನ ರಾಜಸಿಂಹಾಸನದ ಮೇಲೆ ಕುಳಿತಿರುವಾಗ</verse>
				<verse number="3">ತನ್ನ ಆಳಿಕೆಯ ಮೂರನೆಯ ವರ್ಷದಲ್ಲಿ ಅವನು ತನ್ನ ಸಮಸ್ತ ಶ್ರೇಷ್ಠರಿಗೂ ಅಧಿಕಾರಿಗಳಿಗೂ ಔತಣವನ್ನು ಮಾಡಿಸಿದನು. ಪಾರಸಿಯ ಮತ್ತು ಮೇದ್ಯ ದೇಶಗಳ ಸೇನಾಧಿಪತಿಗಳೂ ಪ್ರಾಂತಗಳ ಶ್ರೇಷ್ಠರೂ ಪ್ರಧಾನರೂ ಉಪಸ್ಥಿತರಿದ್ದರು.</verse>
				<verse number="4">ಅವನು ನೂರ ಎಂಬತ್ತು ದಿವಸಗಳವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ವೈಭವ ಹಾಗು ಆಡಂಬರವನ್ನು ತೋರಿಸಿದನು.</verse>
				<verse number="5">ಆ ದಿವಸಗಳು ತೀರಿದ ತರುವಾಯ ಅರಸನು ಶೂಷನಿನ ಅರಮನೆಯಲ್ಲಿರುವ ಹಿರಿಕಿರಿಯರಾದ ಸಮಸ್ತ ಜನರಿಗೂ ಏಳು ದಿವಸಗಳವರೆಗೆ ಅರಸನ ಅರಮನೆಯ ತೋಟದ ಅಂಗಳದಲ್ಲಿ ಔತಣವನ್ನು ಮಾಡಿಸಿದನು.</verse>
				<verse number="6">ಅಲ್ಲಿ ಬಿಳಿ ಕಲ್ಲಿನ ಕಂಬಗಳಿಗೆ ಬೆಳ್ಳಿಯ ಉಂಗುರಗಳಿಂದಲೂ ರಕ್ತವರ್ಣದ ನಯವಾದ ನಾರು ಹಗ್ಗಗಳಿಂದಲೂ ತೂಗು ಹಾಕಲಾಗಿದ್ದವು. ಬಿಳಿ ಹಸಿರೂ ನೀಲವರ್ಣವೂ ಆದ ತೆರೆಗಳಿದ್ದವು. ಮಂಚಗಳು ಬೆಳ್ಳಿ ಬಂಗಾರದವುಗಳಾಗಿ ಕೆಂಪು, ನೀಲಿ, ಬಿಳಿ, ಕಪ್ಪು ಬಣ್ಣಗಳ ಅಮೃತಶಿಲೆಗಳಿಂದ ರಚಿತವಾದ ನೆಲದ ಮೇಲೆ ಇಡಲಾಗಿದ್ದವು.</verse>
				<verse number="7">ಇದಲ್ಲದೆ ನಾನಾ ವಿಧವಾದ ಬಂಗಾರದ ಪಾತ್ರೆಗಳಲ್ಲಿ ಅರಸನ ಔದಾರ್ಯಕ್ಕೆ ತಕ್ಕಂತೆ ದ್ರಾಕ್ಷಾರಸವನ್ನು ಧಾರಾಳವಾಗಿ ಕುಡಿಯಲು ಕೊಟ್ಟರು.</verse>
				<verse number="8">ಮಧುಪಾನ ಸೇವನೆಯಲ್ಲಿ ಪ್ರತಿಯೊಬ್ಬನಿಗೂ ತನ್ನ ಇಚ್ಛಾನುಸಾರ ಕೊಡಬೇಕೆಂತಲೂ ಯಾರಿಗೂ ಒತ್ತಾಯ ಮಾಡಬಾರದೆಂದೂ ಸೇವಕರಿಗೆ ಅರಸನು ಆದೇಶವಿತ್ತಿದ್ದನು.</verse>
				<verse number="9">ಇದಲ್ಲದೆ ರಾಣಿಯಾದ ವಷ್ಟಿ ಅರಸನಾದ ಅಹಷ್ವೇರೋಷನ ಅರಮನೆಯಲ್ಲಿದ್ದ ಸ್ತ್ರೀಯರಿಗೆ ಔತಣವನ್ನು ಮಾಡಿಸಿದಳು.</verse>
				<verse number="10">ಏಳನೆಯ ದಿವಸದಲ್ಲಿ ಅರಸನಾದ ಅಹಷ್ವೇರೋಷನು ದ್ರಾಕ್ಷಾರಸದಿಂದ ಅಮಲೇರಿದಾಗ ಬಹುರೂಪವತಿಯಾದ ವಷ್ಟಿ ರಾಣಿಯ ಸೌಂದರ್ಯವನ್ನು ಜನರಿಗೂ ಪ್ರಧಾನರಿಗೂ ಪ್ರದರ್ಶಿಸುವುದಕ್ಕೆ ರಾಣಿಗೆ ರಾಜಕಿರೀಟವನ್ನು ಧರಿಸಿಕೊಂಡು ತನ್ನ ಮುಂದೆ ಕರೆದುಕೊಂಡು ಬರುವುದಕ್ಕೆ ಅರಸನಾದ ಅಹಷ್ವೇರೋಷನ ಸಮ್ಮುಖದಲ್ಲಿ ಸೇವೆ ಮಾಡುವ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರಕಾಸ್ ಎಂಬ ಏಳುಮಂದಿ ಕಂಚುಕಿಗಳಿಗೆ ಹೇಳಿದನು.</verse>
				<verse number="11"></verse>
				<verse number="12">ಆದರೆ ಅರಸನು ಅವರಿಂದ ಹೇಳಿ ಕಳುಹಿಸಿದ ಮಾತಿಗೆ ವಷ್ಟಿ ರಾಣಿಯು, “ನಾನು ಬರುವುದಿಲ್ಲ,” ಎಂದು ಹೇಳಿದಳು. ಆದ್ದರಿಂದ ಅರಸನು ಬಹುಕೋಪಗೊಂಡು, ರೋಷಾವೇಶನಾದನು.</verse>
				<verse number="13">ಆಗ ನೀತಿ ನ್ಯಾಯಗಳನ್ನು ತಿಳಿದ ಪಂಡಿತರೆಲ್ಲರೊಂದಿಗೆ ಅರಮನೆಯ ಸಂಗತಿಗಳನ್ನು ಆಲೋಚಿಸುವುದು ಅರಸನ ಪದ್ಧತಿಯಾಗಿತ್ತು. ಆದುದರಿಂದ ಅರಸನು ಕಾಲಜ್ಞಾನಿಗಳ ಸಂಗಡ ಈ ವಿಷಯವಾಗಿ ವಿಚಾರಿಸಿದನು.</verse>
				<verse number="14">ಅರಸನಿಗೆ ಬಹು ಹತ್ತಿರವಾಗಿದ್ದ ಪಾರಸಿಯ ಮತ್ತು ಮೇದ್ಯ ದೇಶಗಳ ಏಳುಮಂದಿ ಪ್ರಧಾನರಾದ ಕರ್ಷೇನಾ, ಶೆತಾರ್, ಅದ್ಮಾತಾ, ತಾರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಇವರ ಸಂಗಡ ಮಾತನಾಡಿದನು. ರಾಜ್ಯದಲ್ಲಿ ಇವರು ಅರಸನ ಬಳಿಗೆ ಹೋಗಲು ವಿಶೇಷ ಅನುಮತಿಪಡೆದ ಅತ್ಯಂತ ಶ್ರೇಷ್ಠರಾಗಿದ್ದರು.</verse>
				<verse number="15">ಅಹಷ್ವೇರೋಷನು, “ಅರಸನ ಅಧಿಕಾರಿಗಳ ಮುಖಾಂತರ ಹೇಳಿ ಕಳುಹಿಸಿದ ರಾಜಾಜ್ಞೆಯನ್ನು ಉಲ್ಲಂಘಿಸಿದ ವಷ್ಟಿ ರಾಣಿಯ ವಿರುದ್ಧ ನ್ಯಾಯದ ಪ್ರಕಾರ ಅವಳಿಗೆ ಮಾಡಬೇಕಾದ ಕ್ರಮವೇನು?” ಎಂದು ಕೇಳಿದನು.</verse>
				<verse number="16">ಮೆಮೂಕಾನನು ಅರಸನ ಮುಂದೆಯೂ ಪ್ರಧಾನರ ಮುಂದೆಯೂ, “ವಷ್ಟಿ ರಾಣಿಯು ಅರಸನಿಗೆ ಮಾತ್ರವಲ್ಲ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳಲ್ಲಿರುವ ಸಮಸ್ತ ಶ್ರೇಷ್ಠರಿಗೂ ಸಮಸ್ತ ಜನರಿಗೂ ಅಪರಾಧಮಾಡಿದ್ದಾಳೆ.</verse>
				<verse number="17">ರಾಣಿಯ ವರ್ತನೆ ಇತರ ಎಲ್ಲಾ ಸ್ತ್ರೀಯರಿಗೂ ತಿಳಿದುಬರುವುದು. ‘ಅರಸನಾದ ಅಹಷ್ವೇರೋಷನು ವಷ್ಟಿರಾಣಿಯನ್ನು ತನ್ನ ಮುಂದೆ ಬರಲು ಹೇಳಿ ಕಳುಹಿಸಿದನು. ಆದರೆ ಅವಳು ಬರಲು ನಿರಾಕರಿಸಿದಳು,’ ಎಂದು ಹೇಳಿಕೊಂಡು ಅವರು ತಮ್ಮ ಗಂಡಂದಿರನ್ನೂ ತಿರಸ್ಕರಿಸುವರು.</verse>
				<verse number="18">ಇದಲ್ಲದೆ ರಾಣಿಯ ಮಾತನ್ನು ಕೇಳಿದ ಪಾರಸಿಯ ಮತ್ತು ಮೇದ್ಯ ರಾಣಿಯರೆಲ್ಲರೂ ಈ ಹೊತ್ತು ಅರಸನ ಶ್ರೇಷ್ಠರಿಗೂ ಹಾಗೆಯೇ ಹೇಳುವರು. ಹೀಗೆಯೇ ತಿರಸ್ಕಾರವೂ ರೌದ್ರವೂ ಬಹಳ ಉಂಟಾಗುವುದು.</verse>
				<verse number="19">“ಅರಸನಿಗೆ ಸಮ್ಮತಿಯಾದರೆ, ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯರ ಮತ್ತು ಮೇದ್ಯರ ಕಾನೂನುಗಳಲ್ಲಿ ಲಿಖಿತವಾಗಲಿ.</verse>
				<verse number="20">ಈ ಪ್ರಕಾರ ಅರಸನು ಮಾಡಿದ ಆಜ್ಞೆಯು ತನ್ನ ವಿಸ್ತಾರವಾದ ರಾಜ್ಯವೆಲ್ಲ ಗೊತ್ತಾದಾಗ ಸ್ತ್ರೀಯರೆಲ್ಲರೂ ಹಿರಿಯರಿಂದ ಚಿಕ್ಕವರವರೆಗೂ ತಮ್ಮ ಗಂಡಂದಿರಿಗೆ ಗೌರವಕೊಡುವರು,” ಎಂದು ಸಲಹೆ ನೀಡಿದನು.</verse>
				<verse number="21">ಈ ಮಾತು ಅರಸನಿಗೂ ಶ್ರೇಷ್ಠರಿಗೂ ಸರಿಯೆಂದು ತೋರಿತು. ಆದುದರಿಂದ ಅರಸನು ಮೆಮೂಕಾನ್ ಮಾತಿನಂತೆಯೇ ಮಾಡಿದನು.</verse>
				<verse number="22">ಪ್ರತಿಯೊಂದು ಕುಟುಂಬದಲ್ಲಿಯೂ ಪುರುಷನೇ ಅಧಿಕಾರ ನಡೆಸಬೇಕೆಂದೂ, ತನ್ನ ಸ್ವಜನರ ಭಾಷೆಯಲ್ಲಿಯೇ ವ್ಯವಹಾರ ನಡೆಸಬೇಕೆಂದೂ ಪ್ರಾಂತಗಳ ಹಾಗೂ ಜನಸಾಮಾನ್ಯರ ಭಾಷೆಗಳಲ್ಲಿ ಅರಸನು ಸಮಸ್ತ ಸಂಸ್ಥಾನಗಳಿಗೂ ಪತ್ರಗಳನ್ನು ಬರೆದು ಕಳುಹಿಸಿದನು.</verse>
			</chapter>
			<chapter number="2">
				<verse number="1">ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನ ಕೋಪವು ಶಾಂತವಾಗಿ ಅವನು ವಷ್ಟಿಯನ್ನೂ ಅವಳನ್ನೂ, ಅವಳ ವರ್ತನೆಯನ್ನೂ, ಅವಳಿಗೆ ವಿರೋಧವಾಗಿ ತಾನು ನೀಡಿದ ತೀರ್ಪನ್ನೂ ಜ್ಞಾಪಿಸಿಕೊಂಡನು.</verse>
				<verse number="2">ಆಗ ಅರಸನ ಸೇವೆ ಮಾಡುವ ದಾಸರು ಅವನಿಗೆ, “ಅರಸನಿಗೋಸ್ಕರ ರೂಪವತಿಯಾದ ಕನ್ಯೆಯರನ್ನು ಹುಡುಕಲಿ.</verse>
				<verse number="3">ರೂಪವತಿಯಾರಾದ ಸಮಸ್ತ ಕನ್ಯೆಯರು ರಾಜಧಾನಿಯಾದ ಶೂಷನಿಗೆ ಸ್ತ್ರೀಯರು ಇರುವ ಅರಮನೆಗೆ, ಸ್ತ್ರೀಯರ ಮೇಲೆ ಕಾವಲಾಗಿ ಇರುವ ಅರಸನ ಅಧಿಕಾರಿಗಳಾದ ಹೇಗೈ ಎಂಬವನ ವಶಕ್ಕೆ ಒಪ್ಪಿಸಲಿ. ಅರಸನು ತನ್ನ ರಾಜ್ಯದ ಸಮಸ್ತ ಪ್ರಾಂತಗಳಲ್ಲಿ ಅಧಿಕಾರಿಗಳನ್ನು ನೇಮಿಸಲಿ. ಹೇಗೈ ಅವರಿಗೆ ಸೌಂದರ್ಯವರ್ಧಕ ಸಾಧನಗಳನ್ನು ಕೊಡಲಿ.</verse>
				<verse number="4">ಅರಸನ ದೃಷ್ಟಿಗೆ ಮೆಚ್ಚಿಗೆಯಾಗಿರುವ ಕನ್ನಿಕೆಯು ವಷ್ಟಿಗೆ ಬದಲಾಗಿ ರಾಣಿಯಾಗಲಿ,” ಎಂದನು. ಆ ಮಾತು ಅರಸನಿಗೆ ಸರಿಕಂಡುಬಂದದ್ದರಿಂದ ಅದೇ ಪ್ರಕಾರ ಮಾಡಿದನು.</verse>
				<verse number="5">ಶೂಷನಿನ ಅರಮನೆಯಲ್ಲಿ ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಮೀಯ ಮೊಮ್ಮಗನೂ, ಯಾಯೀರನ ಮಗನೂ ಆದ ಮೊರ್ದೆಕೈ ಎಂಬ ಹೆಸರುಳ್ಳ ಒಬ್ಬ ಯೆಹೂದ್ಯನಿದ್ದನು.</verse>
				<verse number="6">ಅವನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಸೆರೆಯಾಗಿ ತಂದ ಯೆಹೂದದ ಅರಸನಾಗಿರುವ ಯೆಹೋಯಾಕೀನನ ಸಂಗಡ ಯೆರೂಸಲೇಮಿನಿಂದ ಸೆರೆಹಿಡಿಯಲಾದವರಲ್ಲಿ ಒಬ್ಬನಾಗಿದ್ದನು.</verse>
				<verse number="7">ಇವನು ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರ್ ಎಂಬ ಹೆಸರನ್ನು ಪಡೆದ ಹದೆಸ್ಸಳನ್ನು ಸಾಕುತ್ತಿದ್ದನು. ಏಕೆಂದರೆ ಅವಳಿಗೆ ತಂದೆತಾಯಿಗಳು ಇರಲಿಲ್ಲ. ಈಕೆಯು ರೂಪವತಿಯಾಗಿಯೂ ಸೌಂದರ್ಯವಂತಳಾಗಿಯೂ ಇದ್ದಳು. ಅವಳ ತಂದೆತಾಯಿಗಳು ಸತ್ತು ಹೋದ ತರುವಾಯ ಮೊರ್ದೆಕೈ ಅವಳನ್ನು ತನ್ನ ಸ್ವಂತ ಮಗಳಂತೆ ನೋಡಿಕೊಳ್ಳುತ್ತಿದ್ದನು.</verse>
				<verse number="8">ಅರಸನ ಮಾತನ್ನು ಮತ್ತು ಅವನ ಕಟ್ಟಳೆಯನ್ನು ಕೇಳಿದ ತರುವಾಯ ಶೂಷನಿನ ಅರಮನೆಯಲ್ಲಿ ಹೇಗೈಯನ ವಶಕ್ಕೆ ಅನೇಕ ಕನ್ಯೆಯರನ್ನು ಒಪ್ಪಿಸಲಾಯಿತು. ಎಸ್ತೇರಳು ಸಹ ಅರಸನ ಅರಮನೆಯಲ್ಲಿ ಸ್ತ್ರೀಯರ ಕಾವಲಿನವನಾದ ಹೇಗೈಯ ಜವಾಬ್ದಾರಿಕೆಯ ಕೋಣೆಯಲ್ಲಿ ಇದ್ದಳು.</verse>
				<verse number="9">ಎಸ್ತೇರಳು ಹೇಗೈಯ ಮೆಚ್ಚುಗೆಯನ್ನು ಗಳಿಸಿದ್ದರಿಂದ ಅವನ ಸಮ್ಮುಖದಲ್ಲಿ ಅವಳಿಗೆ ದಯೆ ದೊರಕಿತು. ಆದಕಾರಣ ಅವನು ತ್ವರೆಯಾಗಿ ಸೌಂದರ್ಯವರ್ಧಕ ಸಾಧನಗಳನ್ನೂ ಅರಸನ ಅರಮನೆಯಿಂದ ಏಳುಮಂದಿ ದಾಸಿಯರನ್ನೂ ಅವಳಿಗೆ ಕೊಟ್ಟನು. ಇದಲ್ಲದೆ ಸ್ತ್ರೀಯರಿದ್ದ ಕೋಣೆಯಲ್ಲಿ ಉತ್ತಮವಾದ ಭೋಜನಾಂಶಗಳನ್ನು ಅವಳಿಗೂ ಅವಳ ದಾಸಿಯರಿಗೂ ಕೊಟ್ಟನು. ಆಕೆಯನ್ನೂ ಮತ್ತು ಆಕೆಯ ಸೇವಕಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.</verse>
				<verse number="10">ಆದರೆ ಎಸ್ತೇರಳು ತಾನು ಇಂಥ ದೇಶದವಳು ಮತ್ತು ಇಂಥ ಕುಟುಂಬದ ಹಿನ್ನೆಲೆಯವಳು ಎಂಬುದನ್ನು ತಿಳಿಸಲಿಲ್ಲ. ಏಕೆಂದರೆ ತಿಳಿಸಬಾರದೆಂದು ಮೊರ್ದೆಕೈ ಅವಳಿಗೆ ಆಜ್ಞಾಪಿಸಿದ್ದನು.</verse>
				<verse number="11">ಆದರೆ ಎಸ್ತೇರಳ ಕ್ಷೇಮವನ್ನೂ, ಅವಳಿಗೆ ಆಗುವಂಥಾದ್ದನ್ನೂ ತಿಳಿದುಕೊಳ್ಳುವುದಕ್ಕೆ ಮೊರ್ದೆಕೈ ಪ್ರತಿದಿನವೂ ಸ್ತ್ರೀಯರಿದ್ದ ಮನೆಯ ಅಂಗಳದ ಮುಂದೆ ತಿರುಗಾಡುತ್ತಿದ್ದನು.</verse>
				<verse number="12">ಒಬ್ಬೊಬ್ಬ ಕನ್ನಿಕೆಯು ಆರು ತಿಂಗಳು ಸುಗಂಧ ತೈಲದಿಂದಲೂ ಆರು ತಿಂಗಳು ಸೌಂದರ್ಯವರ್ಧಕ ಸಾಧನಗಳಿಂದಲೂ ಕನ್ಯೆಯರ ಲೇಪನಕಾಲದ ಪ್ರಕಾರ ಹನ್ನೆರಡು ತಿಂಗಳಾದ ತರುವಾಯ ಅರಸನಾದ ಅಹಷ್ವೇರೋಷನ ಬಳಿಗೆ ಪ್ರತಿಯೊಬ್ಬ ಕನ್ಯೆಯು ಹೋಗಲು ಅವರವರ ಸರದಿ ಬರುತ್ತಿತ್ತು.</verse>
				<verse number="13">ಈ ಪ್ರಕಾರ ಕನ್ಯೆಯು ಅರಸನ ಬಳಿಗೆ ಪ್ರವೇಶಿಸುವಾಗ ಸ್ತ್ರೀಯರ ಮನೆಯೊಳಗಿಂದ ತನ್ನ ಸಂಗಡ ಅರಸನ ಅರಮನೆಗೆ ಹೋಗಲು ಅವಳು ಏನು ಬೇಡುವಳೋ ಅದು ಅವಳಿಗೆ ಒದಗಿಸಲಾಗುತ್ತಿತ್ತು.</verse>
				<verse number="14">ಆಗ ಅವಳು ಸಾಯಂಕಾಲದಲ್ಲಿ ರಾಜನಿವಾಸಕ್ಕೆ ಪ್ರವೇಶಿಸಿ ಮಾರನೆಯ ದಿವಸದಲ್ಲಿ ಉಪಪತ್ನಿಗಳ ಪಾಲಕನಾದ ಶವಷ್ಗಜ ಎಂಬ ರಾಜಕಂಚುಕಿಯ ವಶದಲ್ಲಿದ್ದ ಸ್ತ್ರೀಯರ ಎರಡನೆಯ ಮನೆಗೆ ಬರಬೇಕಾಗಿತ್ತು. ಅರಸನು ಯಾರಲ್ಲಿ ಸಂತೋಷಪಟ್ಟು ಅವಳನ್ನು ಹೆಸರಿನಿಂದ ಕರೆದ ಹೊರತು ಅವಳು ಪುನಃ ಅರಸನ ಬಳಿಗೆ ಹೋಗಬಾರದು.</verse>
				<verse number="15">ಮೊರ್ದೆಕೈಯ ದತ್ತುಮಗಳೂ, ಅವನ ಚಿಕ್ಕಪ್ಪನಾದ ಅಬೀಹೈಲನ ಮಗಳೂ ಆದ ಎಸ್ತೇರಳು ಅರಸನ ಬಳಿಗೆ ಹೋಗಲು ಸರದಿ ಬಂದಾಗ, ಸ್ತ್ರೀಯರ ಪಾಲಕನೂ ರಾಜಕಂಚುಕಿಯೂ ಆದ ಹೇಗೈ ನೇಮಿಸಿದ್ದನ್ನೇ ಹೊರತು ಬೇರಾವುದನ್ನೂ ಆಕೆ ಕೇಳಲಿಲ್ಲ. ಇದಲ್ಲದೆ ಎಸ್ತೇರಳು ತನ್ನನ್ನು ನೋಡುವ ಎಲ್ಲರಿಂದಲೂ ದಯೆಹೊಂದಿದ್ದಳು.</verse>
				<verse number="16">ಎಸ್ತೇರಳು ಅರಸನಾದ ಅಹಷ್ವೇರೋಷನ ಆಳಿಕೆಯ ಏಳನೆಯ ವರ್ಷದ ಹತ್ತನೆಯ ತಿಂಗಳಾದ ತೇಬೆತ್ ಎಂಬ ಪುಷ್ಯ ಮಾಸದಲ್ಲಿ ಅರಸನ ಬಳಿಗೆ ಕರೆತರಲಾಯಿತು.</verse>
				<verse number="17">ಅರಸನು ಸಕಲ ಕನ್ಯೆಯರಿಗಿಂತ ಹೆಚ್ಚಾಗಿ ಎಸ್ತೇರಳನ್ನು ಮೆಚ್ಚಿಕೊಂಡನು. ಅವಳಿಗೆ ಅವನ ಸಮ್ಮುಖದಲ್ಲಿ ಸಮಸ್ತ ಕನ್ಯೆಯರಿಗಿಂತ ಹೆಚ್ಚು ದಯೆಯೂ ಮೆಚ್ಚುಗೆಯೂ ದೊರಕಿತು. ಆದ್ದರಿಂದ ಅವನು ರಾಜಕಿರೀಟವನ್ನು ಅವಳ ತಲೆಯ ಮೇಲೆ ಇರಿಸಿ ಎಸ್ತೇರಳನ್ನು ವಷ್ಟಿಗೆ ಬದಲಾಗಿ ರಾಣಿಯನ್ನಾಗಿ ಆರಿಸಿಕೊಂಡನು.</verse>
				<verse number="18">ಆಗ ಅರಸನು ತನ್ನ ಸಮಸ್ತ ಪ್ರಧಾನರಿಗೂ ಸೇವಕರಿಗೂ ಎಸ್ತೇರಳ ಗೌರವಾರ್ಥವಾಗಿ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಎಲ್ಲಾ ಪ್ರಾಂತಗಳಿಗೂ ರಜೆಯನ್ನು ಕೊಟ್ಟು ಅರಸನ ಸ್ಥಿತಿಗೆ ತಕ್ಕಂಥ ಬಹುಮಾನಗಳನ್ನು ಕೊಟ್ಟನು.</verse>
				<verse number="19">ಕನ್ಯೆಯರನ್ನು ಎರಡನೆಯ ಸಾರಿ ಕೂಡಿಸುವಾಗ, ಮೊರ್ದೆಕೈಯು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತುಕೊಂಡಿದ್ದನು.</verse>
				<verse number="20">ಎಸ್ತೇರಳು ಮೊರ್ದೆಕೈಯು ತನಗೆ ಆಜ್ಞಾಪಿಸಿದ ಹಾಗೆ ತಾನು ಇಂಥ ದೇಶದವಳು ಮತ್ತು ಇಂಥ ಕುಟುಂಬದ ಹಿನ್ನೆಲೆಯವಳು ಎಂಬುದನ್ನು ಯಾರಿಗೂ ತಿಳಿಸಿರಲಿಲ್ಲ. ಏಕೆಂದರೆ ಎಸ್ತೇರಳು ಮೊರ್ದೆಕೈಯ ಆರೈಕೆಯಲ್ಲಿ ಇದ್ದಾಗ ಆಕೆ ಅವನ ಆಜ್ಞೆಯನ್ನು ಕೈಕೊಂಡು ನಡೆದಂತೆಯೇ ಈಗಲೂ ಅವನ ಆಜ್ಞೆಯನ್ನು ಪಾಲಿಸುತ್ತಿದ್ದಳು.</verse>
				<verse number="21">ಆ ದಿವಸಗಳಲ್ಲಿ ಮೊರ್ದೆಕೈಯು ಅರಮನೆಯ ಬಾಗಿಲಲ್ಲಿ ಕುಳಿತಿರುವಾಗ, ದ್ವಾರಪಾಲಕರಾದಂಥ ಅರಸನ ರಾಜಕಂಚುಕಿಗಳಾದ ಬಿಗೆತಾನ್ ಮತ್ತು ತೆರೆಷ್ ಎಂಬಿಬ್ಬರು ಅರಸನಾದ ಅಹಷ್ವೇರೋಷನ ಮೇಲೆ ಕೋಪಗೊಂಡು ಅವನನ್ನು ಕೊಲ್ಲಬೇಕೆಂದು ಒಳಸಂಚು ಮಾಡಿದರು.</verse>
				<verse number="22">ಈ ಕಾರ್ಯವು ಮೊರ್ದೆಕೈಗೆ ತಿಳಿದದ್ದರಿಂದ ಅವನು ಅದನ್ನು ರಾಣಿಯಾದ ಎಸ್ತೇರಳಿಗೆ ತಿಳಿಸಿದನು. ಎಸ್ತೇರಳು ಮೊರ್ದೆಕೈಯ ಹೆಸರನ್ನು ಅರಸನಿಗೆ ಹೇಳಿ ಆ ಒಳಸಂಚಿನ ಬಗ್ಗೆ ತಿಳಿಸಿದಳು.</verse>
				<verse number="23">ಈ ವಿಷಯ ವಿಚಾರಣೆಗೆ ಬಂದಾಗ ನಿಜವೆಂದು ಗೊತ್ತಾಯಿತು. ಆಗ ಆ ಇಬ್ಬರು ಅಧಿಕಾರಿಗಳನ್ನೂ ಗಲ್ಲಿಗೇರಿಸಲಾಯಿತು. ಇವೆಲ್ಲವನ್ನೂ ಅರಸನ ಮುಂದೆ ಇರುವ ರಾಜನ ಇತಿಹಾಸಗಳ ಪುಸ್ತಕದಲ್ಲಿ ಬರೆದಿಡಲಾಯಿತು.</verse>
			</chapter>
			<chapter number="3">
				<verse number="1">ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನು ಅಗಾಗನ ವಂಶದವನೂ ಹಮ್ಮೆದಾತನ ಮಗ ಹಾಮಾನನನ್ನು ಹಿರಿಯ ಅಧಿಕಾರಿಯನ್ನಾಗಿ ಮಾಡಿ ಅವನನ್ನು ತನ್ನ ಬಳಿಯಲ್ಲಿರುವ ಸಮಸ್ತ ಶ್ರೇಷ್ಠರಿಗಿಂತ ಉನ್ನತಸ್ಥಾನವನ್ನು ಕೊಟ್ಟು ಗೌರವಿಸಿದನು.</verse>
				<verse number="2">ಆದಕಾರಣ ಅರಮನೆಯ ಬಾಗಿಲಲ್ಲಿರುವ ಅರಸನ ಸಮಸ್ತ ಸೇವಕರು ಬಗ್ಗಿ ಹಾಮಾನನಿಗೆ ಅಡ್ಡಬೀಳುತ್ತಿದ್ದರು. ಏಕೆಂದರೆ ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು. ಆದರೆ ಮೊರ್ದೆಕೈಯು ಬಗ್ಗದೆ ಅಡ್ಡಬೀಳದೆಯೂ ಇದ್ದನು.</verse>
				<verse number="3">ಆಗ ಅರಮನೆಯ ಬಾಗಿಲಲ್ಲಿರುವ ಅರಸನ ಸೇವಕರು ಮೊರ್ದೆಕೈಗೆ, “ನೀನು ಅರಸನ ಆಜ್ಞೆಯನ್ನು ಮೀರುವುದೇನು?” ಎಂದರು.</verse>
				<verse number="4">ಅವರು ಪ್ರತಿದಿನ ಅವನಿಗೆ ಹೇಳಿದರೂ ಅವನು ಅವರ ಮಾತಿಗೆ ಕಿವಿಗೊಡಲಿಲ್ಲ. ತಾನು ಯೆಹೂದ್ಯನೆಂದು ಅವರಿಗೆ ಹೇಳಿಕೊಳ್ಳುತ್ತಿದ್ದ ಮೊರ್ದೆಕೈಯ ನಡವಳಿಕೆಯನ್ನು ಸಹಿಸಬಹುದೋ ಎಂದು ಕಾಣಲು ಅವರು ಹಾಮಾನನಿಗೆ ದೂರು ಹೇಳಿದರು.</verse>
				<verse number="5">ಹಾಮಾನನು, ಮೊರ್ದೆಕೈಯು ತನಗೆ ಬಗ್ಗಿ ಅಡ್ಡಬೀಳದೆ ಇರುವುದನ್ನು ಕಂಡಾಗ ಬಹು ಕೋಪಗೊಂಡನು.</verse>
				<verse number="6">ಮೊರ್ದೆಕೈ ಮತ್ತು ಅವನ ಜನರು ಯೆಹೂದ್ಯರೆಂದು ಹಾಮಾನನಿಗೆ ಗೊತ್ತಾದಾಗ ಮೊರ್ದೆಕೈಯನ್ನು ಮಾತ್ರ ಕೊಲ್ಲಬಾರದೆಂದು ಅವನಿಗೆ ತೋರಿತು. ಅದರ ಬದಲು ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನರಾದ ಯೆಹೂದ್ಯರನ್ನೆಲ್ಲಾ ಸಂಹರಿಸಲು ಮಾರ್ಗವನ್ನು ಹುಡುಕಿದನು.</verse>
				<verse number="7">ಅರಸನಾದ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆ ವರ್ಷದ ಮೊದಲನೆಯ ತಿಂಗಳು ಆದ ನಿಸಾನ ಮಾಸದಲ್ಲಿ ಹಾಮಾನನ ಮುಂದೆ ಶುಭಮಾಸವೂ ಶುಭದಿನವೂ ಯಾವುದು ಎಂದು ತಿಳಿದುಕೊಳ್ಳಲು ಪೂರ್ ಅನ್ನು ಅಂದರೆ ಚೀಟನ್ನು ಹಾಕಿದರು. ಚೀಟು ಹನ್ನೆರಡನೆ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.</verse>
				<verse number="8">ಆಗ ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಸಕಲ ಪ್ರಾಂತಗಳಲ್ಲಿರುವ ಜನರೊಳಗೆ ಚದರಿ ಬಂದು ವಾಸಿಸುವ ಪ್ರತ್ಯೇಕವಾದ ಜನಾಂಗದ ಜನರಿದ್ದಾರೆ. ಅವರ ರೀತಿನೀತಿಗಳು ಎಲ್ಲಾ ಜನರಿಗಿಂತಲೂ ಬೇರೆಯಾಗಿರುತ್ತವೆ. ಈ ಜನರು ಅರಸನ ನಿಯಮಗಳನ್ನು ಕೈಗೊಳ್ಳುವುದೇ ಇಲ್ಲ. ಆದಕಾರಣ ಇಂಥವರನ್ನು ಸುಮ್ಮನೇ ಬಿಡುವುದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.</verse>
				<verse number="9">ಅರಸನಿಗೆ ಸಮ್ಮತಿಯಾದರೆ, ಅವರೆಲ್ಲರಿಗೂ ಮರಣದಂಡನೆ ವಿಧಿಸುವಂತೆ ಒಂದು ಆಜ್ಞೆಯನ್ನು ಹೊರಡಿಸಬೇಕು. ಆಗ ನಾನು ರಾಜಭಂಡಾರಕ್ಕೆ 340 ಮೆಟ್ರಿಕ್ ಟನ್ ಬೆಳ್ಳಿಯನ್ನು ಖಜಾಂಚಿಗೆ ಕೊಡುವೆನು,” ಎಂದನು.</verse>
				<verse number="10">ಆಗ ಅರಸನು ತನ್ನ ಕೈಯಲ್ಲಿದ್ದ ಮುದ್ರೆಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನ ವಂಶಸ್ಥನೂ ಹಮ್ಮೆದಾತನ ಮಗನೂ ಆದ ಹಾಮಾನನಿಗೆ ಕೊಟ್ಟನು.</verse>
				<verse number="11">ಅರಸನು ಹಾಮಾನನಿಗೆ, “ಬೆಳ್ಳಿಯನ್ನು ನೀನೇ ಇಟ್ಟುಕೋ: ನಿನಗೆ ಸರಿ ತೋರುವ ಹಾಗೆ ಆ ಜನರಿಗೆ ಮಾಡು,” ಎಂದನು.</verse>
				<verse number="12">ಮೊದಲನೆಯ ತಿಂಗಳ ಹದಿಮೂರನೆಯ ದಿವಸದಲ್ಲಿ ಅರಸನ ಲೇಖಕರನ್ನು ಕರೆಸಲಾಯಿತು. ಹಾಮಾನನು ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಪ್ರತಿ ಪ್ರಾಂತದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅವರವರ ಸ್ವದೇಶಿ ಲಿಪಿಗಳಲ್ಲಿಯೂ, ಭಾಷೆಗಳಲ್ಲಿಯೂ ಪತ್ರಗಳನ್ನು ಬರೆದರು. ಅರಸನಾದ ಅಹಷ್ವೇರೋಷನ ಹೆಸರಿನಲ್ಲಿಯೇ ಲಿಖಿತವಾದ ಈ ಪತ್ರಗಳು ಅರಸನ ಉಂಗುರದಿಂದ ಅಧಿಕೃತ ರಾಜಮುದ್ರೆಯನ್ನು ಹೊಂದಿದ್ದವು.</verse>
				<verse number="13">ಹನ್ನೆರಡನೆಯ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನದಲ್ಲಿ, ಹಿರಿಯರೂ, ಕಿರಿಯರೂ, ಮಕ್ಕಳೂ, ಮಹಿಳೆಯರೂ, ಒಟ್ಟು ಎಲ್ಲಾ ಯೆಹೂದ್ಯರನ್ನು ಒಂದೇ ದಿನದಲ್ಲಿ ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ಅವರ ಆಸ್ತಿಯನ್ನು ಕೊಳ್ಳೆ ಹೊಡೆಯುವದಕ್ಕೂ ಅರಸನ ಎಲ್ಲಾ ಪ್ರಾಂತಗಳಿಗೆ ಅಂಚೆಯವರ ಮೂಲಕ ಪತ್ರಗಳನ್ನು ಕಳುಹಿಸಲಾಯಿತು.</verse>
				<verse number="14">ಎಲ್ಲರೂ ಆ ದಿನದಲ್ಲಿ ಸಿದ್ಧರಾಗಿರುವ ಹಾಗೆ ಪ್ರತಿ ಪ್ರಾಂತದಲ್ಲಿಯೂ ರಾಜಾಜ್ಞೆ ಜಾರಿಗೆ ತರುವುದರಲ್ಲಿ ಇತ್ತು. ರಾಜಾಜ್ಞೆಯಾಗಿ ಬರೆದ ಪತ್ರದ ಪ್ರತಿಯಲ್ಲಿ ಎಲ್ಲಾ ಜನರಲ್ಲಿಯೂ ಜಾರಿಗೆ ತರಲು ಪ್ರಕಟಿಸಬೇಕೆಂದು ಸಹ ಬರೆದಿತ್ತು.</verse>
				<verse number="15">ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನಿನ ಅರಮನೆಯಲ್ಲಿಂದ ಆ ಆಜ್ಞೆಯು ಹೊರಡಿತು. ಅರಸನೂ ಹಾಮಾನನೂ ಮದ್ಯಪಾನ ಮಾಡಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವೋ ತಳಮಳಗೊಂಡಿತ್ತು.</verse>
			</chapter>
			<chapter number="4">
				<verse number="1">ಆದದ್ದೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯನ್ನು ಹಚ್ಚಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ಬಹು ದುಃಖದಿಂದ ಗೋಳಾಡಿದನು.</verse>
				<verse number="2">ಅವನು ಅರಸನ ಅರಮನೆಯ ಬಾಗಿಲಿನವರೆಗೆ ಬಂದನು. ಏಕೆಂದರೆ ಗೋಣಿತಟ್ಟನ್ನು ಉಟ್ಟುಕೊಂಡು ಅರಸನ ಅರಮನೆಯ ಬಾಗಿಲಲ್ಲಿ ಪ್ರವೇಶಿಸಲು ಒಬ್ಬನಿಗೂ ಅಪ್ಪಣೆ ಇರಲಿಲ್ಲ.</verse>
				<verse number="3">ಇದಲ್ಲದೆ ಅರಸನ ಮಾತೂ ಅವನ ಕಟ್ಟಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡರು.</verse>
				<verse number="4">ಆಗ ಎಸ್ತೇರಳ ದಾಸಿಯರೂ ಅವಳ ಕಂಚುಕಿಯರೂ ಬಂದು ಮೊರ್ದೆಕೈ ಬಗ್ಗೆ ಅವಳಿಗೆ ತಿಳಿಸಿದರು. ಆದ್ದರಿಂದ ರಾಣಿಯು ಬಹು ವ್ಯಥೆಪಟ್ಟಳು. ಇದಲ್ಲದೆ ಮೊರ್ದೆಕೈಯು ಗೋಣಿತಟ್ಟನ್ನು ತೆಗೆದುಹಾಕಿ, ವಸ್ತ್ರಗಳನ್ನು ಧರಿಸಿಕೊಳ್ಳುವಂತೆ ಉಡುಪನ್ನು ಕಳುಹಿಸಿಕೊಟ್ಟಳು. ಆದರೆ ಅವನು ಅದನ್ನು ತೆಗೆದುಕೊಳ್ಳಲಿಲ್ಲ.</verse>
				<verse number="5">ಆಗ ಎಸ್ತೇರಳು ತನ್ನ ಬಳಿಯಲ್ಲಿ ಸೇವೆಗಾಗಿ ನೇಮಿಸಲಾಗಿದ್ದ ಅರಸನ ರಾಜಕಂಚುಕಿಯರಲ್ಲಿ ಹತಾಕನನ್ನು ಕರೆದು, ನಡೆದ ಸಂಗತಿ ಏನೆಂದೂ, ಮೊರ್ದೆಕೈಯ ವರ್ತನೆಗೆ ಕಾರಣವನ್ನೂ ಅವನಿಂದ ತಿಳಿದುಕೊಂಡು ಬರಬೇಕೆಂದು ಆಜ್ಞಾಪಿಸಿದಳು.</verse>
				<verse number="6">ಹಾಗೆಯೇ ಹತಾಕನು ಅರಸನ ಅರಮನೆಯ ಬಾಗಿಲ ಮುಂದೆ ಪಟ್ಟಣದ ಬೀದಿಯಲ್ಲಿದ್ದ ಮೊರ್ದೆಕೈಯ ಬಳಿಗೆ ಹೋದನು.</verse>
				<verse number="7">ಆಗ ಮೊರ್ದೆಕೈ ತನಗೆ ಆದ ಎಲ್ಲವನ್ನೂ, ಹಾಮಾನನು ಯೆಹೂದ್ಯರನ್ನು ನಾಶಮಾಡಲು ರಾಜಭಂಡಾರಕ್ಕೆ ಕೊಡಲು ವಾಗ್ದಾನಮಾಡಿಕೊಂಡ ಹಣದ ವಿಷಯವನ್ನೂ ಅವನಿಗೆ ತಿಳಿಸಿದನು.</verse>
				<verse number="8">ಯೆಹೂದ್ಯರನ್ನು ನಾಶಮಾಡಲು ಶೂಷನಿನಲ್ಲಿ ಪ್ರಕಟಗೊಂಡ ರಾಜಾಜ್ಞೆಯ ಪತ್ರದ ಪ್ರತಿಯನ್ನು ಅವನ ಕೈಯಲ್ಲಿ ಕೊಟ್ಟು ಅದನ್ನು ಎಸ್ತೇರಳಿಗೆ ತೋರಿಸಿ ವಿವರಿಸುವಂತೆಯೂ, ಅವಳು ತನ್ನ ಜನರಿಗಾಗಿ ಅರಸನ ಮುಂದೆ ಹೋಗಿ ಬಿನ್ನಹ ಮಾಡುವಂತೆಯೂ ಆಕೆಗೆ ತಿಳಿಸಲು ಹೇಳಿದನು.</verse>
				<verse number="9">ಆಗ ಹತಾಕನು ಹಿಂದಿರುಗಿ ಬಂದು ಎಸ್ತೇರಳಿಗೆ ಮೊರ್ದೆಕೈಯ ಮಾತುಗಳನ್ನು ತಿಳಿಸಿದನು.</verse>
				<verse number="10">ಎಸ್ತೇರಳು ಮತ್ತೊಮ್ಮೆ ಹತಾಕನನ್ನು ಮೊರ್ದೆಕೈಯ ಬಳಿಗೆ ಕಳುಹಿಸಿ,</verse>
				<verse number="11">“ಅರಸನು ಹೇಳಿಕಳುಹಿಸದೆ ಅರಸನ ಬಳಿಗೆ ಅರಮನೆಯ ಒಳಾಂಗಣಕ್ಕೆ ಹೋಗುವ ಗಂಡಸರಿಗಾಗಲಿ, ಹೆಂಗಸರಿಗಾಗಲಿ ಮರಣದಂಡನೆಯಾಗುವುದು. ಒಂದು ವೇಳೆ ಒಳಗೆ ಬಂದ ವ್ಯಕ್ತಿಯ ಕಡೆಗೆ ಅರಸನು ತನ್ನ ಸ್ವರ್ಣದಂಡವನ್ನು ಚಾಚಿದರೆ ಅವನಿಗೆ ಮಾತ್ರ ಮರಣದಂಡನೆಯಾಗದೆ ಜೀವದಿಂದ ಉಳಿಯುವರು. ಈ ರಾಜಾಜ್ಞೆಯನ್ನು ಅರಸನ ಸಮಸ್ತ ಸೇವಕರೂ ಅರಸನ ಪ್ರಾಂತಗಳ ಜನರೂ ತಿಳಿದಿದ್ದಾರೆ. ಆದರೆ ಕಳೆದ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ನನಗೆ ಆಮಂತ್ರಣವೇ ಬರಲಿಲ್ಲ,” ಎಂದು ತಿಳಿಸುವಂತೆ ಹೇಳಿದಳು.</verse>
				<verse number="12">ಹತಾಕನು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದನು.</verse>
				<verse number="13">ಆಗ ಮೊರ್ದೆಕೈಯು ಎಸ್ತೇರಳಿಗೆ, “ಯೆಹೂದ್ಯರೆಲ್ಲಾ ನಾಶವಾದರೂ ನೀನೊಬ್ಬಳು ಮಾತ್ರ ಅರಮನೆಯಲ್ಲಿರುವುದರಿಂದ ತಪ್ಪಿಸಿಕೊಳ್ಳುವೆಯೆಂದು ಭಾವಿಸಬೇಡ.</verse>
				<verse number="14">ಏಕೆಂದರೆ ನೀನು ಈಗ ಮೌನವಾಗಿದ್ದು ಬಿಟ್ಟರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ಬಿಡುಗಡೆಯೂ ಉಂಟಾಗುವುವು. ಆದರೆ ನೀನೂ ನಿನ್ನ ತಂದೆಯ ಮನೆಯವರೂ ನಾಶವಾಗಿಹೋಗುವಿರಿ. ಇಂಥಾ ಕಾಲಕ್ಕೋಸ್ಕರ ನೀನು ಪಟ್ಟಕ್ಕೆ ಬಂದಿರಬಹುದು, ಯಾರಿಗೆ ಗೊತ್ತು?” ಎಂದು ಹೇಳಿ ಕಳುಹಿಸಿದನು.</verse>
				<verse number="15">ಆಗ ಎಸ್ತೇರಳು ಮತ್ತೆ ಮೊರ್ದೆಕೈಗೆ,</verse>
				<verse number="16">“ನೀನು ಹೋಗಿ ಶೂಷನಿನಲ್ಲಿರುವ ಎಲ್ಲಾ ಯೆಹೂದ್ಯರನ್ನು ಕೂಡಿಸು; ನೀವು ರಾತ್ರಿ ಹಗಲೂ ಮೂರು ದಿನ ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸಮಾಡಿರಿ. ಹಾಗೆಯೇ ನಾನೂ ನನ್ನ ದಾಸಿಯರೊಡನೆ ಉಪವಾಸ ಮಾಡುವೆನು. ಅನಂತರ ನಾನು ರಾಜಾಜ್ಞೆಯನ್ನು ಮೀರಿ ಅರಸನ ಬಳಿಗೆ ಹೋಗುವೆನು. ನಾನು ಸತ್ತರೂ ಸಾಯುವೆನು,” ಎಂದು ಹೇಳಿಕಳುಸಿದಳು.</verse>
				<verse number="17">ಆಗ ಮೊರ್ದೆಕೈ ಹೊರಟುಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.</verse>
			</chapter>
			<chapter number="5">
				<verse number="1">ಮೂರನೆಯ ದಿವಸದಲ್ಲಿ, ಎಸ್ತೇರಳು ರಾಜವಸ್ತ್ರ ಆಭರಣಗಳನ್ನು ಧರಿಸಿಕೊಂಡು ಅರಮನೆಗೆ ಎದುರಾಗಿರುವ ಅರಸನ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ನಿಂತಳು. ಅರಸನು ರಾಜಮಂದಿರದೊಳಗೆ ತನ್ನ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತಿದ್ದನು.</verse>
				<verse number="2">ಅರಸನು ಪ್ರಾಕಾರದಲ್ಲಿ ನಿಂತಿರುವ ಎಸ್ತೇರ್ ರಾಣಿಯನ್ನು ಕಂಡ ಕೂಡಲೆ, ಆಕೆಗೆ ತನ್ನ ಮೆಚ್ಚುಗೆಯನ್ನು ತೋರಿ ತನ್ನ ಕೈಯಲ್ಲಿದ್ದ ಸ್ವರ್ಣದಂಡವನ್ನು ಎಸ್ತೇರಳ ಕಡೆಗೆ ಚಾಚಿದನು. ಎಸ್ತೇರಳು ಸಮೀಪಕ್ಕೆ ಬಂದು ರಾಜದಂಡದ ತುದಿಯನ್ನು ಮುಟ್ಟಿದಳು.</verse>
				<verse number="3">ಆಗ ಅರಸನು ಅವಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು.</verse>
				<verse number="4">ಅದಕ್ಕೆ ಎಸ್ತೇರಳು ಅರಸನಿಗೆ, “ಸಮ್ಮತಿಯಾದರೆ ನಾನು ಅರಸನಿಗಾಗಿ ಸಿದ್ಧಮಾಡಿಸಿರುವ ಔತಣಕ್ಕೆ ಅರಸನೂ ಹಾಮಾನನೂ ಈ ಹೊತ್ತು ಬರಬೇಕು,” ಎಂದಳು.</verse>
				<verse number="5">ಆಗ ಅರಸನು, “ಎಸ್ತೇರಳು ಹೇಳಿದ ಪ್ರಕಾರ ನಾವು ಮಾಡಲು, ಬೇಗನೆ ಹಾಮಾನನನ್ನು ಕರೆದುಕೊಂಡು ಬನ್ನಿರಿ,” ಎಂದು ಆಜ್ಞಾಪಿಸಿದನು. ಎಸ್ತೇರಳು ಏರ್ಪಡಿಸಿದ್ದ ಔತಣಕ್ಕೆ ಅರಸನೂ ಹಾಮಾನನೂ ಬಂದರು.</verse>
				<verse number="6">ದ್ರಾಕ್ಷಾರಸವನ್ನು ಪಾನಮಾಡುತ್ತಿರುವಾಗ ಅರಸನು ಮತ್ತೊಮ್ಮೆ ಎಸ್ತೇರಳಿಗೆ, “ಈಗ ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು.</verse>
				<verse number="7">ಅದಕ್ಕೆ ಎಸ್ತೇರಳು, “ನನ್ನ ಬೇಡಿಕೆಯೂ ನನ್ನ ವಿಜ್ಞಾಪನೆಯೂ ಇದೇ:</verse>
				<verse number="8">ಅರಸನಿಗೆ ಸಮ್ಮತಿಯಾದರೆ, ಅರಸನಿಗೂ ಹಾಮಾನನಿಗೂ ನಾನು ಮಾಡಲಿರುವ ಔತಣಕ್ಕೆ ನಾಳೆಯೂ ಬರಬೇಕು. ಆಗ ಅರಸನ ಪ್ರಶ್ನೆಗೆ ಉತ್ತರಕೊಡುವೆನು,” ಎಂದಳು.</verse>
				<verse number="9">ಆ ದಿನದಲ್ಲಿ ಹಾಮಾನನು ಹರ್ಷಭರಿತನಾಗಿ ಹೊರಟುಹೋದನು. ಆದರೆ ಅರಮನೆಯ ಹೆಬ್ಬಾಗಿಲಲ್ಲಿರುವ ಮೊರ್ದೆಕೈ ತನಗೆ ಭಯಪಡದೆ ಕುಳಿತುಕೊಂಡೇ ಇರುವುದನ್ನು ಹಾಮಾನನು ಕಂಡು ಮೊರ್ದೆಕೈಯ ಮೇಲೆ ಕೋಪಗೊಂಡನು.</verse>
				<verse number="10">ಆದರೂ ಹಾಮಾನನು ಬಿಗಿಹಿಡಿದುಕೊಂಡು ತನ್ನ ಮನೆಗೆ ಹೋದನು. ಅವನು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆಯಿಸಿದನು.</verse>
				<verse number="11">ಹಾಮಾನನು ತನ್ನ ಐಶ್ವರ್ಯದ ಘನವನ್ನೂ, ತನ್ನ ಮಕ್ಕಳ ಹೆಚ್ಚಳವನ್ನೂ, ಅರಸನು ತನ್ನನ್ನು ಹೆಚ್ಚಿಸಿದ್ದನ್ನೂ, ಅರಸನ ಪ್ರಭುಗಳ ಹಾಗೂ ಸೇವಕರ ಮೇಲೆ ಎತ್ತಿದ್ದನ್ನೂ ಹೀಗೆ ಎಲ್ಲವನ್ನೂ ಅವರಿಗೆ ವಿವರವಾಗಿ ಹೇಳಿದನು.</verse>
				<verse number="12">ಇದಲ್ಲದೆ ಹಾಮಾನನು, “ಎಸ್ತೇರ್ ರಾಣಿಯು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೆ ಯಾರನ್ನು ಕರೆಯಲಿಲ್ಲ. ಮರುದಿನವೂ ಅರಸನೊಂದಿಗೆ ಔತಣಮಾಡಲು ನನ್ನನ್ನು ಆಹ್ವಾನಿಸಿದ್ದಾಳೆ.</verse>
				<verse number="13">ಆದರೆ ಯೆಹೂದ್ಯನಾದ ಮೊರ್ದೆಕೈಯು ಅರಮನೆಯ ಬಾಗಿಲಲ್ಲಿ ನನ್ನ ಕಣ್ಣೆದುರು ಕುಳಿತಿರುವವರೆಗೂ ಇದೆಲ್ಲದರಿಂದ ನನಗೆ ತೃಪ್ತಿಯಾಗುವುದಿಲ್ಲ” ಎಂದನು.</verse>
				<verse number="14">ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆ, “ಅರಸನ ಅಪ್ಪಣೆಯನ್ನು ಪಡೆದು ಮೊರ್ದೆಕೈಯನ್ನು ಬೆಳಿಗ್ಗೆ ಗಲ್ಲಿಗೇರಿಸಲು ಇಪ್ಪತ್ತು ಮೀಟರ್ ಉದ್ದದ ಒಂದು ಗಲ್ಲುಮರವನ್ನು ಮಾಡು. ತರುವಾಯ ಅರಸನ ಸಂಗಡ ಔತಣಕ್ಕೆ ಹೋಗಿ ಸಂತೋಷವಾಗಿರು,” ಎಂದರು. ಈ ಸಲಹೆ ಹಾಮಾನನಿಗೆ ಮೆಚ್ಚಿಕೆಯಾದದ್ದರಿಂದ ಗಲ್ಲುಮರವನ್ನು ಸಿದ್ಧಮಾಡಿಸಿದನು.</verse>
			</chapter>
			<chapter number="6">
				<verse number="1">ಆ ರಾತ್ರಿ ಅರಸನಿಗೆ ನಿದ್ರೆ ಬರಲಿಲ್ಲ. ಆದ್ದರಿಂದ ಅರಸನು ಇತಿಹಾಸ ಘಟನೆಗಳನ್ನು ಬರೆದಿಟ್ಟಿದ್ದ ಗ್ರಂಥವನ್ನು ತೆಗೆದುಕೊಂಡು ಬರಲು ಹೇಳಿದನು.</verse>
				<verse number="2">ಅದನ್ನು ಅರಸನ ಮುಂದೆ ತಂದು ಓದಿಸಿದಾಗ, ದ್ವಾರಪಾಲಕರಾಗಿದ್ದ ರಾಜಕಂಚುಕಿಯರಲ್ಲಿ ಇಬ್ಬರಾದ ಬಿಗೆತಾನನೂ ತೆರೆಷನೂ ಅರಸನಾದ ಅಹಷ್ವೇರೋಷನನ್ನು ಕೊಲ್ಲಬೇಕೆಂದು ಒಳಸಂಚುಮಾಡಿದ ಘಟನೆಯು ಬರೆದಿತ್ತು. ಮೊರ್ದೆಕೈಯು ಹೇಗೆ ಅದನ್ನು ಅರಸನಿಗೆ ತಿಳಿಸಿದನೆಂದು ಸಹ ಅದರಲ್ಲಿ ಬರೆದಿತ್ತು.</verse>
				<verse number="3">ಆಗ ಅರಸನು, “ಈ ಸತ್ಕಾರ್ಯಕ್ಕಾಗಿ ಮೊರ್ದೆಕೈಯನಿಗೆ ಯಾವ ಸನ್ಮಾನ ಮಾಡಲಾಯಿತು?” ಎಂದು ವಿಚಾರಿಸಿದನು. ಅರಸನ ಸೇವಕರು, “ಮೊರ್ದೆಕೈಯನಿಗೆ ಏನೂ ಮಾಡಿಲ್ಲ,” ಎಂದು ಹೇಳಿದರು.</verse>
				<verse number="4">ಆಗ ಅರಸನು, “ಯಾರು ಅಂಗಳದಲ್ಲಿ?” ಎಂದನು. ಅಷ್ಟರಲ್ಲಿ ಹಾಮಾನನು ತಾನು ಸಿದ್ಧಮಾಡಿಸಿದ ಗಲ್ಲುಮರಕ್ಕೆ ಮೊರ್ದೆಕೈಯನ್ನು ನೇಣುಹಾಕಿಸಲು ಅರಸನ ಸಂಗಡ ಮಾತನಾಡಲು ಅರಮನೆಯ ಹೊರಗಿನ ಅಂಗಳಕ್ಕೆ ಬಂದಿದ್ದನು.</verse>
				<verse number="5">ಆದ್ದರಿಂದ ಅರಸನ ಸೇವಕರು, “ಇಗೋ, ಹಾಮಾನನು ಅಂಗಳದಲ್ಲಿ ನಿಂತಿದ್ದಾನೆ,” ಎಂದರು. ಅದಕ್ಕೆ ಅರಸನು, “ಅವನು ಒಳಗೆ ಬರಲಿ,” ಎಂದನು.</verse>
				<verse number="6">ಹಾಮಾನನು ಒಳಕ್ಕೆ ಬಂದಾಗ ಅರಸನು ಅವನಿಗೆ, “ಅರಸನು ಒಬ್ಬ ವ್ಯಕ್ತಿಯನ್ನು ಸನ್ಮಾನಿಸಲು ಬಯಸಿದರೆ ಮನುಷ್ಯನಿಗೆ ಅಂಥ ವ್ಯಕ್ತಿಗೆ ಮಾಡಬೇಕಾದದ್ದೇನು?” ಎಂದು ವಿಚಾರಿಸಿದನು. ಆಗ ಹಾಮಾನನು ತನ್ನನ್ನು ಅಲ್ಲದೆ ಅರಸನು ಬೇರೆ ಯಾರನ್ನು ಸನ್ಮಾನಿಸಬೇಕೆಂದಿರುವನು ಎಂದುಕೊಂಡನು.</verse>
				<verse number="7">ಆದ್ದರಿಂದ ಹಾಮಾನನು ಅರಸನಿಗೆ, “ಅರಸನು ಸನ್ಮಾನಿಸಬೇಕೆಂದಿರುವ ಮನುಷ್ಯನಿಗೆ ಮಾಡಬೇಕಾದದ್ದೇನೆಂದರೆ,</verse>
				<verse number="8">ಅರಸನು ಧರಿಸಿಕೊಳ್ಳುವ ರಾಜವಸ್ತ್ರಗಳನ್ನೂ, ಅರಸನು ಸವಾರಿ ಮಾಡುವ ಕುದುರೆಯನ್ನೂ, ಅರಸನ ತಲೆಯ ಮೇಲೆ ಧರಿಸಿಕೊಳ್ಳುವ ರಾಜಕಿರೀಟವನ್ನೂ ತರಿಸಬೇಕು.</verse>
				<verse number="9">ಆ ವಸ್ತ್ರಗಳನ್ನೂ ಕುದುರೆಯನ್ನೂ ಅರಸನ ಪ್ರಧಾನರಲ್ಲಿ ಒಬ್ಬನ ವಶಕ್ಕೆ ಕೊಡಬೇಕು. ಇವನು ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಗೆ ರಾಜವಸ್ತ್ರಗಳನ್ನು ತೊಡಿಸಿದ ತರುವಾಯ, ಅವನನ್ನು ಕುದುರೆಯ ಮೇಲೆ ಕೂರಿಸಿ ಪಟ್ಟಣ ಬೀದಿಗಳಲ್ಲಿ ಮೆರವಣಿಗೆ ಮಾಡಿಸುತ್ತಾ, ಅವನ ಮುಂದೆ, ‘ಅರಸನು ಸನ್ಮಾನಿಸಬೇಕೆಂದಿರುವ ಮನುಷ್ಯನಿಗೆ ಗೌರವಿಸುವ ರೀತಿ ಇದೇ!’ ಎಂದು ಪ್ರಕಟಿಸಬೇಕು,” ಎಂದನು.</verse>
				<verse number="10">ಆಗ ಅರಸನು ಹಾಮಾನನಿಗೆ, “ನೀನು ಹೇಳಿದ ಪ್ರಕಾರವೇ ಬೇಗನೆ ಹೋಗಿ ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಅರಮನೆಯ ಹೆಬ್ಬಾಗಿಲಲ್ಲಿ ಕುಳಿತಿರುವ ಯೆಹೂದ್ಯನಾದ ಮೊರ್ದೆಕೈಗೆ ಹಾಗೆಯೇ ಮಾಡು. ನೀನು ಸಲಹೆಮಾಡಿದ್ದರಲ್ಲಿ ಒಂದನ್ನೂ ಬಿಡದೆ, ಎಲ್ಲವನ್ನೂ ಮಾಡು,” ಎಂದು ಹಾಮಾನನಿಗೆ ಆಜ್ಞಾಪಿಸಿದನು.</verse>
				<verse number="11">ಆದ್ದರಿಂದ ಹಾಮಾನನು ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಮೊರ್ದೆಕೈಗೆ ಆ ವಸ್ತ್ರಗಳನ್ನು ತೊಡಿಸಿ, ಅವನನ್ನು ಕುದುರೆಯ ಮೇಲೆ ಕೂರಿಸಿ ಪಟ್ಟಣದ ಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವ ಮನುಷ್ಯನಿಗೆ ಗೌರವಿಸುವ ರೀತಿ ಇದೇ!” ಎಂದು ಸಾರಿದನು.</verse>
				<verse number="12">ಅನಂತರ ಮೊರ್ದೆಕೈ ಪುನಃ ಅರಮನೆಯ ಬಾಗಿಲಿಗೆ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆಯನ್ನು ಮುಚ್ಚಿಕೊಂಡು ತನ್ನ ಮನೆಗೆ ಶೀಘ್ರವಾಗಿ ಹೋದನು.</verse>
				<verse number="13">ಆಗ ಹಾಮಾನನು ತನ್ನ ಹೆಂಡತಿಯಾದ ಜೆರೆಷಳಿಗೂ ತನ್ನ ಸಮಸ್ತ ಸ್ನೇಹಿತರಿಗೂ ತನಗೆ ಆದದ್ದನ್ನೆಲ್ಲಾ ವಿವರವಾಗಿ ಹೇಳಿದನು. ಆಗ ಅವನ ಸಲಹೆಗಾರರೂ ಹೆಂಡತಿಯಾದ ಜೆರೆಷಳೂ ಅವನಿಗೆ, “ಯಾವನ ಮುಂದೆ ನಿನ್ನ ಬೀಳುವಿಕೆ ಪ್ರಾರಂಭವಾಯಿತೋ, ಆ ಮೊರ್ದೆಕೈ ಯೆಹೂದ್ಯನಾಗಿದ್ದರೆ ನೀನು ಅವನನ್ನು ಜಯಿಸಲಾರೆ. ನಿಶ್ಚಯವಾಗಿ, ನೀನು ಅವನಿಂದ ನಾಶವಾಗುವಿ,” ಎಂದರು.</verse>
				<verse number="14">ಅವರು ಇನ್ನೂ ಅವನ ಸಂಗಡ ಮಾತನಾಡುತ್ತಿರುವಾಗಲೇ ರಾಜಕಂಚುಕಿಯವರು ಬಂದು, ಎಸ್ತೇರಳು ಏರ್ಪಡಿಸಿದ ಔತಣಕ್ಕೆ ಬೇಗನೆ ಬರಬೇಕೆಂದು ಹಾಮಾನನನ್ನು ಕರೆದರು.</verse>
			</chapter>
			<chapter number="7">
				<verse number="1">ಅರಸನೂ ಹಾಮಾನನೂ ಎಸ್ತೇರ್ ರಾಣಿಯ ಔತಣಕ್ಕೆ ಬಂದರು.</verse>
				<verse number="2">ಎರಡನೆಯ ದಿವಸ ದ್ರಾಕ್ಷಾರಸವನ್ನು ಪಾನಮಾಡುತ್ತಿರುವಾಗ ಅರಸನು ಮತ್ತೊಮ್ಮೆ ಎಸ್ತೇರಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಏನು? ನಿನ್ನ ಬೇಡಿಕೆ ಏನು? ಅದು ನನ್ನ ರಾಜ್ಯದ ಅರ್ಧವಾಗಿದ್ದರೂ ಸರಿ, ನಾನು ಅದನ್ನು ನಿನಗೆ ಕೊಡುವೆನು,” ಎಂದನು.</verse>
				<verse number="3">ಆಗ ಎಸ್ತೇರ್ ರಾಣಿಯು ಉತ್ತರವಾಗಿ, “ಅರಸನೇ, ನಾನು ನಿನ್ನ ದೃಷ್ಟಿಯಲ್ಲಿ ದಯೆಹೊಂದಿದವಳಾಗಿದ್ದರೆ, ನನ್ನ ಪ್ರಾಣವನ್ನೂ ನನ್ನ ಜನರ ಪ್ರಾಣವನ್ನೂ ಉಳಿಸಬೇಕು. ಇದೇ ನನ್ನ ವಿಜ್ಞಾಪನೆ. ಇದೇ ನನ್ನ ಬೇಡಿಕೆ.</verse>
				<verse number="4">ಏಕೆಂದರೆ ನಾನು ಮತ್ತು ನನ್ನ ಜನರು ದುರಂತಕ್ಕೂ, ಕೊಲೆಗೂ, ಸರ್ವನಾಶಕ್ಕೂ ಮಾರಟವಾಗಿದ್ದೇವೆ. ಒಂದು ವೇಳೆ, ನಾವು ದಾಸರಾಗಿಯಾಗಲಿ, ದಾಸಿಯರಾಗಲಿ ಮಾರಾಟವಾಗಿದ್ದರೆ ನಾನು ಸುಮ್ಮನಿರುತ್ತಿದ್ದೆ. ಅಂಥ ಕಷ್ಟಕ್ಕಾಗಿ ನಾನು ಅರಸನನ್ನು ತೊಂದರೆಪಡಿಸದೆ ಸುಮ್ಮನೆ ಇದ್ದುಬಿಡುತ್ತಿದ್ದೆನು,” ಎಂದಳು.</verse>
				<verse number="5">ಆಗ ಅರಸನಾದ ಅಹಷ್ವೇರೋಷನು ರಾಣಿಯಾದ ಎಸ್ತೇರಳಿಗೆ, “ಯಾರು ಅವನು? ಈ ಪ್ರಕಾರ ಮಾಡಲು ಧೈರ್ಯಗೊಂಡವನು ಯಾರು? ಅವನು ಎಲ್ಲಿದ್ದಾನೆ?” ಎಂದನು.</verse>
				<verse number="6">ಅದಕ್ಕೆ ಎಸ್ತೇರಳು, “ಆ ವೈರಿಯೂ ಹಗೆಗಾರನೂ ಬೇರೆ ಯಾರೂ ಅಲ್ಲ, ಈ ದುಷ್ಟ ಹಾಮಾನನೇ!” ಎಂದಳು. ಆಗ ಹಾಮಾನನು ಅರಸನ ಮುಂದೆಯೂ, ರಾಣಿಯ ಮುಂದೆಯೂ ಬೆಪ್ಪಾದನು.</verse>
				<verse number="7">ಅರಸನು ಕೋಪಗೊಂಡು ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟು, ಎದ್ದು ಅರಮನೆಯ ತೋಟಕ್ಕೆ ಹೋದನು. ಆದರೆ ಹಾಮಾನನು ರಾಣಿಯಾದ ಎಸ್ತೇರಳ ಮುಂದೆ ತನ್ನ ಪ್ರಾಣಕ್ಕೋಸ್ಕರ ಬೇಡಿಕೊಳ್ಳುತ್ತಾ ನಿಂತನು. ಏಕೆಂದರೆ ಅರಸನಿಂದ ತನಗೆ ಕೇಡು ನಿರ್ಣಯವಾಯಿತೆಂದು ಅವನಿಗೆ ತಿಳಿದಿತ್ತು.</verse>
				<verse number="8">ಅರಸನು ಅರಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ಹಿಂದಿರುಗಿ ಬಂದಾಗ, ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು, “ನನ್ನ ಮುಂದೆಯೇ ಇವನು ರಾಣಿಯನ್ನು ಬಲಾತ್ಕಾರ ಮಾಡಬೇಕೆಂದಿರುವನೋ?” ಎಂದನು. ಆ ಮಾತು ಅರಸನ ಬಾಯಿಂದ ಹೊರಟ ಕೂಡಲೆ ಸೇವಕರು ಹಾಮಾನನ ಮುಖದ ಮೇಲೆ ಮುಸುಕನ್ನು ಹಾಕಿದರು.</verse>
				<verse number="9">ಆಗ ರಾಜಕಂಚುಕಿಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ ಬಂದು, “ಇಗೋ, ಅರಸನ ಪ್ರಾಣವನ್ನು ರಕ್ಷಿಸಲು ಮಾತಾಡಿದ ಮೊರ್ದೆಕೈಯನ್ನು ಕೊಲ್ಲುವುದಕ್ಕಾಗಿ ಹಾಮಾನನು ಮಾಡಿಸಿದ ಇಪ್ಪತ್ತೆರಡು ಮೀಟರ್ ಗಲ್ಲುಮರವು ಹಾಮಾನನ ಮನೆಯ ಹತ್ತಿರ ಇದೆ,” ಎಂದನು. ಅದಕ್ಕೆ ಅರಸನು, “ಇವನನ್ನು ಅದರಲ್ಲಿ ನೇತುಹಾಕಿರಿ” ಎಂದನು.</verse>
				<verse number="10">ಅವರು ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲುಮರದಲ್ಲಿ ಅವನನ್ನು ನೇತುಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.</verse>
			</chapter>
			<chapter number="8">
				<verse number="1">ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಸೊತ್ತನ್ನು ರಾಣಿಯಾದ ಎಸ್ತೇರಳಿಗೆ ಕೊಟ್ಟನು. ಇದಲ್ಲದೆ ಮೊರ್ದೆಕೈ ಅರಸನ ಬಳಿಗೆ ಬಂದನು. ಏಕೆಂದರೆ ಮೊರ್ದೆಕೈ ತನಗೆ ಸಂಬಂಧಿಕನು ಎಂದು ಎಸ್ತೇರಳು ತಿಳಿಸಿದ್ದಳು.</verse>
				<verse number="2">ಆಗ ಅರಸನು ತಾನು ಹಾಮಾನನಿಂದ ತೆಗೆದುಕೊಂಡ ತನ್ನ ಮುದ್ರೆಉಂಗುರವನ್ನು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆಕೈಯನ್ನು ಹಾಮಾನನ ಸೊತ್ತಿಗೆ ಅಧಿಕಾರಿಯಾಗಿ ನೇಮಿಸಿದಳು.</verse>
				<verse number="3">ಎಸ್ತೇರಳು ಪುನಃ ಅರಸನ ಮುಂದೆ ಹೋಗಿ ಅವನ ಪಾದಗಳ ಮುಂದೆ ಬಿದ್ದು, ಅತ್ತುಕೊಂಡು ಬೇಡಿದಳು. ಅಗಾಗನ ವಂಶದನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆದುಹಾಕಲು ಬೇಡಿಕೊಂಡಳು.</verse>
				<verse number="4">ಆಗ ಅರಸನು ಎಸ್ತೇರಳ ಕಡೆಗೆ ಸ್ವರ್ಣದಂಡವನ್ನು ಚಾಚಿದ್ದರಿಂದ, ಎಸ್ತೇರಳು ಎದ್ದು ಅರಸನ ಮುಂದೆ ನಿಂತಳು.</verse>
				<verse number="5">ಅವಳು, “ಅರಸನಿಗೆ ನನ್ನ ಮೇಲೆ ದಯೆಯಿದ್ದರೆ, ಈ ಕಾರ್ಯವು ಅರಸನಿಗೆ ಸರಿ ಎಂದೆಣಿಸಿದರೆ, ಅರಸನು ನನ್ನನ್ನು ಮೆಚ್ಚಿದ್ದರೆ, ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಕೊಂದುಹಾಕುವುದಕ್ಕೆ, ಅಗಾಗನ ವಂಶದ ಹಮ್ಮೆದಾತನ ಮಗ ಹಾಮಾನನು ಬರೆದ ಪತ್ರಗಳನ್ನು ರದ್ದುಗೊಳಿಸಲು ಆಜ್ಞೆ ಹೊರಡಿಸಬೇಕು.</verse>
				<verse number="6">ನನ್ನ ಜನರಿಗೆ ಕೇಡು ಸಂಭವಿಸುವುದನ್ನು ನೋಡಿ ನಾನು ಹೇಗೆ ಸಹಿಸಲಿ? ಇಲ್ಲವೆ ನನ್ನ ಕುಟುಂಬದ ನಾಶವನ್ನು ನಾನು ನೋಡಿ ಹೇಗೆ ಸಹಿಸಲಿ?” ಎಂದಳು.</verse>
				<verse number="7">ಆಗ ಅರಸನಾದ ಅಹಷ್ವೇರೋಷನು ಎಸ್ತೇರ್ ರಾಣಿಗೂ ಯೆಹೂದ್ಯನಾದ ಮೊರ್ದೆಕೈಗೂ ಹೇಳಿದ್ದೇನೆಂದರೆ, “ಇಗೋ, ಹಾಮಾನನು ಯೆಹೂದ್ಯರ ವಿರುದ್ಧ ಕೈಯೆತ್ತಿದ್ದರಿಂದ ಅವನ ಸೊತ್ತನ್ನು ಎಸ್ತೇರಳಿಗೆ ಕೊಟ್ಟೆನು. ಹಾಮಾನನನ್ನು ಗಲ್ಲಿಗೆ ಹಾಕಿದ್ದಾರೆ.</verse>
				<verse number="8">ಈಗ ನೀವು ಯೆಹೂದ್ಯರಿಗೋಸ್ಕರ ಅರಸನ ಹೆಸರಿನಿಂದ ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋರುವ ಹಾಗೆ ಬೇರೆ ಒಂದು ಪತ್ರವನ್ನು ಬರೆದು, ಅರಸನ ಉಂಗುರದಿಂದ ಮುದ್ರೆಹಾಕಿರಿ. ಏಕೆಂದರೆ ಅರಸನ ಹೆಸರಿನಿಂದ ಬರೆಯಲಾದ ಹಾಗು ರಾಜಮುದ್ರೆಯನ್ನು ಹೊಂದಿರುವ ಲೇಖನವನ್ನು ಯಾರೂ ಈಗ ರದ್ದುಮಾಡಲಾಗದು,” ಎಂದು ಹೇಳಿದನು.</verse>
				<verse number="9">ಆಗ ಮೂರನೆಯ ತಿಂಗಳಾದ ಸಿವಾನ್ ಎಂಬ ಮಾಸದ ಇಪ್ಪತ್ತಮೂರನೆಯ ದಿನದಲ್ಲಿ ಅರಸನ ಲೇಖಕರನ್ನು ಕರೆಯಲಾಯಿತು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ, ಸಕಲ ಯೆಹೂದ್ಯರಿಗೂ ಹಿಂದೂ ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇರುವ ನೂರ ಇಪ್ಪತ್ತೇಳು ಪ್ರಾಂತಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ, ಅಧಿಕಾರಿಗಳಿಗೂ, ಅವರವರ ಪ್ರಾಂತದ ಲಿಪಿಯಲ್ಲಿಯೂ, ಅವರವರ ಭಾಷೆಯಲ್ಲಿಯೂ ಪತ್ರಗಳನ್ನು ಬರೆಯಲಾಯಿತು.</verse>
				<verse number="10">ಮೊರ್ದೆಕೈ ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದ ಪತ್ರಗಳಿಗೆ ಅರಸನ ಉಂಗುರದಿಂದ ಮುದ್ರೆಹಾಕಿ, ಸವಾರಿ ಕುದುರೆಗಳನ್ನು ಹತ್ತಿಕೊಂಡಿದ್ದ ಅಂಚೆಯವರ ಮೂಲಕ ವೇಗವಾಗಿ ಕಳುಹಿಸಿದನು.</verse>
				<verse number="11">ಅರಸನಾದ ಅಹಷ್ವೇರೋಷನ ಆಜ್ಞೆಯ ಪ್ರಕಾರ, ಸಮಸ್ತ ಪ್ರಾಂತಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಒಟ್ಟಾಗಿ ಸೇರಿ ಪ್ರಾಣರಕ್ಷಣೆ ಮಾಡಿಕೊಳ್ಳುವ ಹಕ್ಕನ್ನು ಕೊಡಲಾಗಿತ್ತು. ಯಾವುದೇ ದೇಶದವರು ಅಥವಾ ಪ್ರಾಂತದವರು ಆಯುಧಗಳೊಡನೆ ಅವರಿಗೆ ವಿರೋಧವಾಗಿ ಎದ್ದು ಅವರನ್ನಾಗಲಿ, ಅವರ ಮಹಿಳೆಯರನ್ನಾಗಲಿ, ಅವರ ಮಕ್ಕಳನ್ನಾಗಲಿ ದಾಳಿಮಾಡಲು ಬಂದರೆ, ಅಂಥವರನ್ನು ಕೊಂದುಹಾಕುವುದಕ್ಕೂ ನಾಶಮಾಡುವುದಕ್ಕೂ ವೈರಿಯ ಆಸ್ತಿಯನ್ನು ಕೊಳ್ಳೆ ಹೊಡೆಯುವುದಕ್ಕೂ ಅಧಿಕಾರಕೊಡಲಾಗಿತ್ತು.</verse>
				<verse number="12">ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಇದನ್ನು ಮಾಡಲು ನೇಮಿಸಿದ ದಿನವು, ಹನ್ನೆರಡನೆಯ ತಿಂಗಳಾದ ಆದಾರ್ ಮಾಸದ ಹದಿಮೂರನೆಯ ದಿನವಾಗಿತ್ತು.</verse>
				<verse number="13">ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳಲು, ಅವರು ಆ ದಿನ ಸಿದ್ಧವಾಗಿರಬೇಕೆಂದು ಈ ಆಜ್ಞಾಪತ್ರದ ಪ್ರತಿಯು ಪ್ರಾಂತ ಪ್ರಾಂತಗಳಲ್ಲಿ ಕಾನೂನಾಗಿ ಸಕಲ ದೇಶದವರಿಗೂ ಸಾರಿ ಹೇಳಲಾಗಿತ್ತು.</verse>
				<verse number="14">ಅಂಚೆಯವರು ಅರಸನ ಆಜ್ಞೆಯಿಂದ ಪ್ರೇರಿತರಾಗಿ ಅರಮನೆಯ ಕುದುರೆಗಳ ಮೇಲೆ ಅತಿ ಶೀಘ್ರವಾಗಿ ಹೊರಟರು. ಈ ಆಜ್ಞೆಯು ಶೂಷನ್ ನಗರದ ಅರಮನೆಯಲ್ಲಿ ಕೊಡಲಾಗಿತ್ತು.</verse>
				<verse number="15">ಮೊರ್ದೆಕೈ ಶುಭ್ರವಾದ ನೀಲ ರಾಜವಸ್ತ್ರವನ್ನು ಧರಿಸಿ, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣವುಳ್ಳ ನಯವಾದ ನಾರಿನ ಶಾಲನ್ನು ಹೊದ್ದುಕೊಂಡು ಅರಸನ ಸಮ್ಮುಖದಿಂದ ಹೊರಟುಹೋದನು. ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.</verse>
				<verse number="16">ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾಗಿದ್ದವು.</verse>
				<verse number="17">ಅರಸನ ಆಜ್ಞೆಯು ಪ್ರಕಟವಾದ ಪ್ರತಿ ಪ್ರಾಂತದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ ಯೆಹೂದ್ಯರಿಗೆ ಸಂತೋಷವೂ ಆನಂದವೂ ಸಂಭ್ರಮವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಇತರ ದೇಶಗಳ ಅನೇಕ ಜನರು ಯೆಹೂದ್ಯರಾದರು. ಯೆಹೂದ್ಯರ ಭಯವು ಅವರ ಮೇಲೆ ಇತ್ತು.</verse>
			</chapter>
			<chapter number="9">
				<verse number="1">ಹನ್ನೆರಡನೆಯ ತಿಂಗಳಾದ ಆದಾರ್ ತಿಂಗಳೆಂಬ ಹದಿಮೂರನೆಯ ದಿನದಲ್ಲಿ ಅರಸನ ಆಜ್ಞೆಯು ನೆರವೇರುವುದಕ್ಕೆ ನಿರ್ಣಯವಾಗಿತ್ತು. ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವುದಾಗಿ ಎದುರುನೋಡಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಲಾರಂಭಿಸಿದರು.</verse>
				<verse number="2">ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನ ಸಮಸ್ತ ಪ್ರಾಂತಗಳಲ್ಲಿರುವ ತಮ್ಮ ತಮ್ಮ ಪಟ್ಟಣಗಳಲ್ಲಿ ಯೆಹೂದ್ಯರು ತಮ್ಮನ್ನು ಕೊಲ್ಲಲು ಹುಡುಕುವವರ ಮೇಲೆ ದಾಳಿಮಾಡಲು ಒಟ್ಟಾಗಿ ಸೇರಿದರು. ಆಗ ಯೆಹೂದ್ಯರ ಭಯವು ಸಮಸ್ತ ಜನರ ಮೇಲೆ ಇದ್ದುದರಿಂದ ಅವರ ಮುಂದೆ ನಿಲ್ಲುವವನು ಒಬ್ಬನೂ ಇರಲಿಲ್ಲ.</verse>
				<verse number="3">ಇದಲ್ಲದೆ ಪ್ರಾಂತಗಳ ಉಪರಾಜರೂ, ಪ್ರತಿನಿಧಿಗಳೂ, ಅಧಿಪತಿಗಳೂ, ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಏಕೆಂದರೆ ಮೊರ್ದೆಕೈಯ ಭಯ ಅವರಿಗಿತ್ತು.</verse>
				<verse number="4">ಏಕೆಂದರೆ ಮೊರ್ದೆಕೈ ಅರಮನೆಯಲ್ಲಿ ಪ್ರಮುಖನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತಗಳಿಗೂ ಹರಡಿತು. ಈ ಮೊರ್ದೆಕೈ ಅಧಿಕವಾಗಿ ಅಧಿಕಾರವಂತನಾದನು.</verse>
				<verse number="5">ಹೀಗೆ ಯೆಹೂದ್ಯರು ತಮ್ಮ ಶತ್ರುಗಳೆಲ್ಲರನ್ನು ಸೋಲಿಸಿ, ಖಡ್ಗದಿಂದ ಸಂಹರಿಸಿದರು. ತಮ್ಮನ್ನು ಹಗೆಮಾಡುತ್ತಿದ್ದವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು.</verse>
				<verse number="6">ಶೂಷನಿನ ಅರಮನೆಯಲ್ಲಿ ಯೆಹೂದ್ಯರು ಐನೂರು ಮಂದಿಗೆ ಮರಣದಂಡನೆ ವಿಧಿಸಿದರು.</verse>
				<verse number="7">ಇದಲ್ಲದೆ ಪರ್ಷಂದಾತನು ದಲ್ಫೋನನು, ಅಸ್ಪಾತನು,</verse>
				<verse number="8">ಪೊರಾತನು, ಅದಲ್ಯನು, ಅರಿದಾತನು,</verse>
				<verse number="9">ಪರ್ಮಷ್ಟನು, ಅರಿಸಾಯನು, ಅರಿದಾಯನು, ವೈಜಾತನು ಎಂಬವರನ್ನು ಕೊಂದರು.</verse>
				<verse number="10">ಇವರು ಯೆಹೂದ್ಯರ ವೈರಿಯಾದ ಹಮ್ಮೆದಾತನ ಮಗ ಹಾಮಾನನ ಹತ್ತು ಮಂದಿ ಪುತ್ರರು. ಆದರೆ ಅವರು ಇವರ ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.</verse>
				<verse number="11">ಅದೇ ದಿವಸ ಶೂಷನಿನ ಅರಮನೆಯಲ್ಲಿ ಮರಣದಂಡನೆಯಾದವರ ಲೆಕ್ಕವು ಅರಸನ ಮುಂದೆ ಒಪ್ಪಿಸಲಾಯಿತು.</verse>
				<verse number="12">ಆಗ ಅರಸನು ಎಸ್ತೇರ್ ರಾಣಿಗೆ, “ಯೆಹೂದ್ಯರು ಶೂಷನಿನ ಅರಮನೆಯಲ್ಲಿ ಐನೂರು ಮಂದಿಯನ್ನೂ ಹಾಮಾನನ ಹತ್ತು ಮಕ್ಕಳನ್ನೂ ಸಂಹರಿಸಿದ್ದಾರೆ. ಅವರು ಅರಸನ ಮಿಕ್ಕಾದ ಪ್ರಾಂತಗಳಲ್ಲಿ ಏನು ಮಾಡಿರಬಹುದೋ? ಈಗ ನಿನ್ನ ವಿಜ್ಞಾಪನೆ ಏನು? ಅದು ನಿನಗೆ ಕೊಡಲಾಗುವುದು. ಇನ್ನೂ ನಿನ್ನ ಬೇಡಿಕೆ ಏನು? ಅದು ಮಾಡಲಾಗುವುದು,” ಎಂದು ಹೇಳಿದನು.</verse>
				<verse number="13">ಅದಕ್ಕೆ ಎಸ್ತೇರಳು, “ಅರಸನಿಗೆ ಸಮ್ಮತಿಯಾದರೆ, ಇಂದಿನಂತೆಯೇ ರಾಜಾಜ್ಞೆಯು ನಾಳೆಯೂ ಶೂಷನ್ ಪಟ್ಟಣದಲ್ಲಿ ಜಾರಿಗೆ ಬರಲು ಯೆಹೂದ್ಯರಿಗೆ ಅಪ್ಪಣೆ ಆಗಲಿ. ಹಾಮಾನನ ಹತ್ತು ಮಂದಿ ಮಕ್ಕಳ ಶವಗಳನ್ನು ಗಲ್ಲಿಗೇರಿಸುವಂತೆ ಅಪ್ಪಣೆಯಾಗಲಿ,” ಎಂದಳು.</verse>
				<verse number="14">ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಜಾರಿಗೆಬಂದಾಗ ಅವರು ಹಾಮಾನನ ಹತ್ತು ಮಂದಿ ಪುತ್ರರ ಶವವನ್ನು ಗಲ್ಲಿಗೆ ಹಾಕಿದರು.</verse>
				<verse number="15">ಇದಲ್ಲದೆ ಶೂಷನಿನಲ್ಲಿರುವ ಯೆಹೂದ್ಯರು ಆದಾರ್ ಎಂಬ ಫಾಲ್ಗುನಮಾಸದ ಹದಿನಾಲ್ಕನೆಯ ದಿವಸದಲ್ಲಿ ಶೂಷನಿನಲ್ಲಿ ಒಟ್ಟಾಗಿ ಸೇರಿ ಮುನ್ನೂರು ಮಂದಿಗೆ ಮರಣದಂಡನೆಯನ್ನು ವಿಧಿಸಿದರು. ಆದರೆ ಅವರು ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.</verse>
				<verse number="16">ಅರಸನ ಪ್ರಾಂತಗಳಲ್ಲಿರುವ ಮಿಕ್ಕ ಯೆಹೂದ್ಯರು ತಮ್ಮ ಪ್ರಾಣ ರಕ್ಷಣೆಗಾಗಿ ಎದ್ದು ನಿಂತು, ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆಯುವಂತೆ ಒಟ್ಟಾಗಿ ಸೇರಿದರು. ಅವರು ತಮ್ಮ ವೈರಿಗಳಲ್ಲಿ 75,000 ಮಂದಿಗೆ ಮರಣದಂಡನೆ ವಿಧಿಸಿದರು. ಆದರೆ ಅವರ ಸುಲಿಗೆಯನ್ನು ತೆಗೆದುಕೊಳ್ಳಲಿಲ್ಲ.</verse>
				<verse number="17">ಆದಾರ್ ಮಾಸದ ಹದಿಮೂರನೆಯ ದಿನ ಈ ಘಟನೆ ನಡೆಯಿತು. ಹದಿನಾಲ್ಕನೆಯ ದಿನದಂದು ಅವರು ವಿಶ್ರಮಿಸಿಕೊಂಡು, ಅದನ್ನು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.</verse>
				<verse number="18">ಆದರೆ ಶೂಷನಿನಲ್ಲಿದ್ದ ಯೆಹೂದ್ಯರು ಹದಿಮೂರನೆಯ ಹಾಗೂ ಹದಿನಾಲ್ಕನೆಯ ದಿನಗಳಲ್ಲಿ ಒಟ್ಟಾಗಿ ಸೇರಿಬಂದದ್ದರಿಂದ, ಹದಿನೈದನೆಯ ದಿನದಲ್ಲಿ ಅವರು ವಿಶ್ರಮಿಸಿಕೊಂಡು, ಅದೇ ದಿನವನ್ನು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.</verse>
				<verse number="19">ಆದಕಾರಣ ಗ್ರಾಮಗಳಲ್ಲಿಯೂ ಬಯಲು ಪ್ರಾಂತಗಳ ಪಟ್ಟಣಗಳಲ್ಲಿಯೂ ವಾಸವಾಗಿರುವ ಯೆಹೂದ್ಯರು ಆದಾರ್ ಮಾಸದ ಹದಿನಾಲ್ಕನೆಯ ದಿನವನ್ನು ಶುಭದಿನವಾಗಿಯೂ, ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ ಆಚರಿಸಿದರು.</verse>
				<verse number="20">ಮೊರ್ದೆಕೈಯು ಈ ಘಟನೆಗಳನ್ನು ಬರೆದು ಅರಸನಾದ ಅಹಷ್ವೇರೋಷನ ಸಕಲ ಪ್ರಾಂತಗಳಲ್ಲಿ ಸಮೀಪದಲ್ಲಿಯೂ ದೂರದಲ್ಲಿಯೂ ಇದ್ದ ಯೆಹೂದ್ಯರು ಎಲ್ಲರಿಗೂ ಪತ್ರಗಳ ಮುಖಾಂತರ ಕಳುಹಿಸಿದನು.</verse>
				<verse number="21">ಯೆಹೂದ್ಯರು ಆದಾರ್ ಮಾಸದ ಹದಿನಾಲ್ಕನೆ ಮತ್ತು ಹದಿನೈದನೆ ದಿನಗಳನ್ನೂ ಪ್ರತಿವರ್ಷ ಹಬ್ಬದ ದಿನಗಳಾಗಿ ಆಚರಿಸುವುದು ಶಾಶ್ವತ ನಿಯಮವೆಂದು ಭಾವಿಸುವಂತೆ ಆ ಪತ್ರದಲ್ಲಿ ಬರೆಯಲಾಗಿತ್ತು.</verse>
				<verse number="22">ಆ ದಿನಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳ ಕಾಟದಿಂದ ವಿಶ್ರಾಂತಿ ಪಡೆದ ಕಾಲವಾಗಿಯೂ, ಅವರ ದುಃಖ ಸಂತೋಷವೂ, ಗೋಳಾಟ ಉತ್ಸವವೂ ಬದಲಾದ ದಿನವಾಗಿಯೂ ಕೊಂಡಾಡುವಂತೆ ಆ ಪತ್ರದಲ್ಲಿ ಬರೆದಿತ್ತು. ಆದ್ದರಿಂದ ಆ ದಿನ ಸಂಭ್ರಮದ ದಿನವಾಗಿಯೂ, ಒಬ್ಬರಿಗೊಬ್ಬರು ಭೋಜನ ಕೊಡುಗೆಗಳನ್ನು ಕಳುಹಿಸುವ ದಿನವಾಗಿಯೂ, ಬಡವರಿಗೆ ದಾನಗಳನ್ನು ಮಾಡುವ ದಿನವಾಗಿಯೂ ಪಾಲಿಸಬೇಕೆಂದೂ ಆ ಪತ್ರದಲ್ಲಿ ಬರೆದಿತ್ತು.</verse>
				<verse number="23">ಆದ್ದರಿಂದ ಯೆಹೂದ್ಯರು ಮೊರ್ದೆಕೈಯು ತಮಗೆ ಬರೆದ ಪ್ರಕಾರವಾಗಿ, ತಾವು ಆರಂಭಮಾಡಿದ್ದ ಸಂಭ್ರಮವನ್ನು ಮುಂದುವರಿಸಲು ಒಪ್ಪಿಕೊಂಡರು.</verse>
				<verse number="24">ಏಕೆಂದರೆ ಸಮಸ್ತ ಯೆಹೂದ್ಯರಿಗೂ ಕಡು ವೈರಿಯಾದ, ಅಗಾಗನ ವಂಶದ, ಹಮ್ಮೆದಾತನ ಮಗನಾದ ಹಾಮಾನನು ಯೆಹೂದ್ಯರನ್ನು ಸಂಹರಿಸಬೇಕೆಂದು ತೀರ್ಮಾನಿಸಿಕೊಂಡು ಅವರನ್ನು ಹಾಳುಮಾಡಲು, ನಿರ್ನಾಮಗೊಳಿಸಲು ಪೂರ್ ಅಂದರೆ, ಚೀಟನ್ನು ಹಾಕಿದ್ದನು.</verse>
				<verse number="25">ಆದರೆ ಈ ಒಳಸಂಚು ಅರಸನಿಗೆ ತಿಳಿದುಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವಂತೆ ಅರಸನು ಆಜ್ಞೆಯನ್ನು ಹೊರಡಿಸಿದನು. ಅದರೊಂದಿಗೆ ಅವನ ಮಕ್ಕಳನ್ನೂ ಗಲ್ಲಿಗೇರಿಸಲು ಅರಸನು ಆಜ್ಞಾಪಿಸಿದ್ದನು;</verse>
				<verse number="26">ಆದ್ದರಿಂದ ಪೂರ್ ಎಂಬ ಪದದ ಆಧಾರದ ಮೇಲೆ ಆ ದಿನಗಳಿಗೆ ಪೂರಿಮ್ ಎಂಬ ಹೆಸರಾಯಿತು. ಅರಸನು ಪತ್ರದಲ್ಲಿ ಬರೆದ ಎಲ್ಲಾ ಮಾತುಗಳನ್ನೂ, ಅವುಗಳ ಸಂಬಂಧವಾಗಿ ತಾವು ಅನುಭವಿಸಿದ್ದನ್ನೂ, ತಮಗೆ ಸಂಭವಿಸಿದ್ದನ್ನೂ</verse>
				<verse number="27">ಯೆಹೂದ್ಯರು ಸ್ಮರಿಸಿಕೊಂಡು ಪ್ರತಿವರ್ಷವೂ ಆ ಎರಡು ದಿನಗಳನ್ನು, ಅವುಗಳಿಗೆ ಸಂಬಂಧಪಟ್ಟ ಶಾಸನದ ಪ್ರಕಾರ, ನಿಯಮಿತ ಕಾಲದಲ್ಲಿ ಆಚರಿಸುವಂತೆ ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಯಾವ ವಿಧದಲ್ಲಿಯೂ ಮೀರಕೂಡದ ಪದ್ಧತಿಯನ್ನಾಗಿ ಪಾಲಿಸಲು ತೀರ್ಮಾನಿಸಿದರು.</verse>
				<verse number="28">ಇದಲ್ಲದೆ ಈ ಎರಡು ದಿನಗಳನ್ನು ಪ್ರತಿ ಪ್ರಾಂತದಲ್ಲಿಯೂ ಪ್ರತಿ ಪಟ್ಟಣದಲ್ಲಿಯೂ, ಪ್ರತಿ ತಲೆಮಾರಿನಲ್ಲಿಯೂ, ಪ್ರತಿ ಕುಟುಂಬದಲ್ಲಿಯೂ ಸ್ಮರಿಸಿ ಆಚರಿಸಬೇಕು. ಈ ಪೂರಿಮ್ ದಿನಗಳು ಯೆಹೂದ್ಯರಲ್ಲಿ ಎಂದಿಗೂ ನಿಂತುಹೋಗಬಾರದು. ಅವರ ಸಂತಾನದವರಲ್ಲಿ ಅವುಗಳ ಜ್ಞಾಪಕವು ಅಳಿದು ಹೋಗಬಾರದು ಎಂದೂ ತೀರ್ಮಾನಿಸಿಕೊಂಡರು.</verse>
				<verse number="29">ಆಗ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯೂ, ಈ ಪೂರಿಮ್ ದಿನವನ್ನು ಸ್ಥಿರಪಡಿಸುವುದಕ್ಕಾಗಿ ಯೆಹೂದ್ಯನಾದ ಮೊರ್ದೆಕೈಯ ಸಹಾಯದಿಂದ ಎರಡನೆಯ ಪತ್ರವನ್ನು ಪೂರ್ಣ ಅಧಿಕಾರದಿಂದ ಬರೆದಳು.</verse>
				<verse number="30">ಮೊರ್ದೆಕೈಯೂ ದಯೆ ಹಾಗೂ ಭರವಸೆಯ ಮಾತುಗಳಿಂದ ಅಹಷ್ವೇರೋಷನ ರಾಜ್ಯದ ನೂರ ಇಪ್ಪತ್ತೇಳು ಪ್ರಾಂತಗಳಲ್ಲಿರುವ ಸಮಸ್ತ ಯೆಹೂದ್ಯರಿಗೆ ಪತ್ರಗಳನ್ನು ಕಳುಹಿಸಿದನು.</verse>
				<verse number="31">ಇದಲ್ಲದೆ ಈ ಪೂರಿಮ್ ದಿನಗಳನ್ನು ಯೆಹೂದ್ಯನಾದ ಮೊರ್ದೆಕೈಯೂ ರಾಣಿಯಾದ ಎಸ್ತೇರಳೂ ಎಲ್ಲಾ ಯೆಹೂದ್ಯರಿಗೂ, ಅವರ ಸಂತಾನದವರಿಗೂ ಉಪವಾಸ ಮಾಡಿ, ದುಃಖಿಸುವ ಕಾಲವನ್ನು ಸ್ಥಿರಪಡಿಸಿದ ಪ್ರಕಾರವೇ ಈ ಪೂರಿಮ್ ದಿನವನ್ನು ಸ್ಥಿರಪಡಿಸುವುವಂತೆ ಆಜ್ಞಾಪಿಸಿದ್ದರು.</verse>
				<verse number="32">ಹೀಗೆಯೇ ಎಸ್ತೇರಳ ಆಜ್ಞೆಯು ಈ ಪೂರಿಮ್ ದಿವಸಗಳ ಕಾರ್ಯಗಳನ್ನು ಸ್ಥಿರಪಡಿಸಿದ್ದರಿಂದ ಅದು ಗ್ರಂಥದಲ್ಲಿ ಬರೆಯಲಾಯಿತು.</verse>
			</chapter>
			<chapter number="10">
				<verse number="1">ಅರಸನಾದ ಅಹಷ್ವೇರೋಷನು ದೇಶದ ಮೇಲೆಯೂ ಸಮುದ್ರದ ದ್ವೀಪಗಳ ಮೇಲೆಯೂ ತೆರಿಗೆಯನ್ನು ನೇಮಿಸಿದನು.</verse>
				<verse number="2">ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿದ್ಧಿಯೂ ಮೇದ್ಯ ಮತ್ತು ಪಾರಸಿಯ ಅರಸರ ಇತಿಹಾಸಗಳ ಗ್ರಂಥದಲ್ಲಿ ಬರೆದಿರುತ್ತವೆ.</verse>
				<verse number="3">ಯೆಹೂದ್ಯನಾದ ಮೊರ್ದೆಕೈ ಅರಸನಾದ ಅಹಷ್ವೇರೋಷನಿಗೆ ಎರಡನೆಯವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಸಹೋದರರ ಸಮೂಹದಲ್ಲಿ ಹೆಚ್ಚಿನ ಗೌರವ ಪಾತ್ರನೂ ತನ್ನ ಜನರ ಹಿತಚಿಂತಕನೂ ತನ್ನ ಸಂತಾನದವರಿಗೆ ಕ್ಷೇಮಾಭಿವೃದ್ಧಿಯನ್ನು ಮಾತನಾಡುವವನೂ ಆಗಿದ್ದನು.</verse>
			</chapter>
		</book>
		<book number="18">
			<chapter number="1">
				<verse number="1">ಊಚ್ ದೇಶದಲ್ಲಿ ಯೋಬ ಎಂಬ ಮನುಷ್ಯನಿದ್ದನು. ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೆಟ್ಟದ್ದನ್ನು ತೊರೆಯುವವನೂ ಆಗಿದ್ದನು.</verse>
				<verse number="2">ಅವನಿಗೆ ಏಳುಮಂದಿ ಪುತ್ರರೂ ಮೂರು ಮಂದಿ ಪುತ್ರಿಯರೂ ಇದ್ದರು.</verse>
				<verse number="3">ಅವನಿಗೆ ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಐನೂರು ಕತ್ತೆಗಳು ಮತ್ತು ಅನೇಕ ಕೆಲಸಗಾರರಿದ್ದರು. ಅವನು ಪೂರ್ವದೇಶದ ಜನರೆಲ್ಲರಲ್ಲಿಯೇ ಹೆಚ್ಚು ಐಶ್ವರ್ಯವುಳ್ಳವನಾಗಿದ್ದನು.</verse>
				<verse number="4">ಅವನ ಪುತ್ರರು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ಏರ್ಪಡಿಸಿ, ತಮ್ಮ ಸಂಗಡ ಊಟಮಾಡುವದಕ್ಕೆ ತಮ್ಮ ಮೂವರು ಸಹೋದರಿಯರನ್ನು ಆಹ್ವಾನಿಸುತ್ತಿದ್ದರು.</verse>
				<verse number="5">ಔತಣದ ದಿನಗಳು ಮುಗಿದ ಬಳಿಕ, ಯೋಬನು, “ಬಹುಶಃ ನನ್ನ ಮಕ್ಕಳು ಪಾಪಮಾಡಿ, ಮನದಲ್ಲೇ ದೇವರನ್ನು ದೂಷಿಸಿರಬಹುದು,” ಎಂದುಕೊಂಡು, ಅವರನ್ನು ಶುದ್ಧಿಗೊಳಿಸಲು ವ್ಯವಸ್ಥೆ ಮಾಡುತ್ತಿದ್ದನು. ಬೆಳಿಗ್ಗೆ ಎದ್ದು ಪ್ರತಿಯೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು. ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.</verse>
				<verse number="6">ಒಂದು ದಿನ, ದೇವದೂತರು ಯೆಹೋವ ದೇವರ ಮುಂದೆ ಒಟ್ಟಾಗಿ ಸೇರಿಬಂದಾಗ, ಸೈತಾನನು ಸಹ ಅವರೊಂದಿಗೆ ಸೇರಿಬಂದನು.</verse>
				<verse number="7">ಯೆಹೋವ ದೇವರು ಸೈತಾನನಿಗೆ, “ನೀನು ಎಲ್ಲಿಂದ ಬಂದೆ?” ಎಂದು ಕೇಳಿದರು. ಸೈತಾನನು ಯೆಹೋವ ದೇವರಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗಾಡುತ್ತಾ ಇದ್ದು ಬಂದೆನು,” ಎಂದನು.</verse>
				<verse number="8">ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ,” ಎಂದರು.</verse>
				<verse number="9">ಆಗ ಸೈತಾನನು ಉತ್ತರವಾಗಿ ಯೆಹೋವ ದೇವರಿಗೆ, “ಲಾಭವಿಲ್ಲದೆ ಯೋಬನು ದೇವರಲ್ಲಿ ಭಯಭಕ್ತಿಯಿಟ್ಟಿದ್ದಾನೋ?</verse>
				<verse number="10">ನೀವು ಅವನಿಗೂ ಅವನ ಮನೆಗೂ ಅವನಲ್ಲಿ ಇರುವ ಎಲ್ಲವುಗಳ ಸುತ್ತಲು ಬೇಲಿ ಹಾಕಿದ್ದೀರಲ್ಲಾ? ಅವನು ಕೈಹಾಕಿದ ಕೆಲಸವನ್ನು ನೀವು ಆಶೀರ್ವದಿಸಿದ್ದೀರಿ, ಆದ್ದರಿಂದ ಅವನ ಕುರಿದನಗಳ ಹಿಂಡುಗಳು ಭೂಮಿಯ ಮೇಲೆಲ್ಲಾ ಹರಡುತ್ತಾ ಬಂದಿದೆ.</verse>
				<verse number="11">ಆದರೆ ನಿಮ್ಮ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡಿರಿ, ಆಗ ಅವನು ನಿಮ್ಮನ್ನು ಮುಖಾಮುಖಿಯಾಗಿ ಶಪಿಸುವನು,” ಎಂದನು.</verse>
				<verse number="12">ಯೆಹೋವ ದೇವರು ಸೈತಾನನಿಗೆ, “ಅವನಲ್ಲಿರುವ ಎಲ್ಲವೂ ನಿನ್ನ ಅಧಿಕಾರದಲ್ಲಿ ಇವೆ. ಆದರೆ ಅವನ ಮೇಲೆ ಮಾತ್ರ ನಿನ್ನ ಕೈ ಹಾಕಬೇಡ,” ಎಂದರು. ಆಗ ಸೈತಾನನು ಯೆಹೋವ ದೇವರ ಸನ್ನಿಧಾನದಿಂದ ಹೊರಟುಹೋದನು.</verse>
				<verse number="13">ಒಂದು ದಿನ ಯೋಬನ ಪುತ್ರಪುತ್ರಿಯರು ತಮ್ಮ ಹಿರಿಯ ಅಣ್ಣನ ಮನೆಯಲ್ಲಿ ದ್ರಾಕ್ಷಾರಸವನ್ನು ಕುಡಿಯುತ್ತಾ ಔತಣಮಾಡುತ್ತಿದ್ದರು.</verse>
				<verse number="14">ಒಬ್ಬ ದೂತನು ಯೋಬನ ಬಳಿಗೆ ಬಂದು, “ಎತ್ತುಗಳು ಉಳುಮೆ ಮಾಡುತ್ತಾ ಇದ್ದವು. ಹೆಣ್ಣು ಕತ್ತೆಗಳು ಹತ್ತಿರದಲ್ಲೆ ಮೇಯುತ್ತಾ ಇದ್ದವು.</verse>
				<verse number="15">ಶೆಬದವರು ಅವುಗಳ ಮೇಲೆ ದಾಳಿಮಾಡಿ, ಅವುಗಳನ್ನು ತೆಗೆದುಕೊಂಡು ಹೋದರು. ಸೇವಕರನ್ನು ಸಹ ಖಡ್ಗದಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.</verse>
				<verse number="16">ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬ ದೂತನು ಬಂದು, “ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿಗಳನ್ನೂ ಸೇವಕರನ್ನೂ ಸುಟ್ಟುಹಾಕಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.</verse>
				<verse number="17">ಇವನು ಇನ್ನೂ ಮಾತನಾಡುತ್ತಿರಲು, ಇನ್ನೊಬ್ಬ ದೂತನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ಒಂಟೆಗಳ ಮೇಲೆ ದಾಳಿಮಾಡಿ, ಅವುಗಳನ್ನು ತೆಗೆದುಕೊಂಡು ಹೋದರು. ಆಳುಗಳನ್ನು ಖಡ್ಗದಿಂದ ಸಂಹರಿಸಿದರು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.</verse>
				<verse number="18">ಇವನು ಇನ್ನೂ ಮಾತನಾಡುತ್ತಿರಲು, ಮತ್ತೊಬ್ಬ ದೂತನು ಬಂದು, “ನಿನ್ನ ಪುತ್ರ ಪುತ್ರಿಯರೂ ತಮ್ಮ ಹಿರಿಯ ಅಣ್ಣನ ಮನೆಯಲ್ಲಿ ದ್ರಾಕ್ಷಾರಸ ಕಡಿಯುತ್ತಾ ಔತಣ ಮಾಡುತ್ತಿರುವಾಗ,</verse>
				<verse number="19">ಇದ್ದಕ್ಕಿದ್ದಂತೆ ಮರುಭೂಮಿ ಕಡೆಯಿಂದ ದೊಡ್ಡ ಗಾಳಿ ಬೀಸಿ, ಮನೆಯ ನಾಲ್ಕು ಮೂಲೆಗಳಿಗೆ ಬಡಿಯಿತು. ಮನೆಯು ಯೌವನಸ್ಥರ ಮೇಲೆ ಬಿತ್ತು, ಅವರು ಸತ್ತುಹೋದರು. ನಾನೊಬ್ಬನು ಮಾತ್ರ, ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.</verse>
				<verse number="20">ಆಗ ಯೋಬನು ಎದ್ದು ತನ್ನ ಮೇಲಂಗಿಯನ್ನು ಹರಿದುಕೊಂಡನು. ನಂತರ ತನ್ನ ತಲೆ ಬೋಳಿಸಿಕೊಂಡು, ನೆಲಕ್ಕೆ ಬಿದ್ದು ಸಾಷ್ಟಾಂಗವೆರಗಿ,</verse>
				<verse number="21">ಹೀಗೆ ಹೇಳಿದನು: “ಬೆತ್ತಲೆಯಾಗಿ ನನ್ನ ತಾಯಿಯ ಗರ್ಭದಿಂದ ಬಂದೆನು, ಬೆತ್ತಲೆಯಾಗಿ ಗತಿಸಿ ಹೋಗುವೆನು. ಯೆಹೋವ ದೇವರು ಕೊಟ್ಟರು, ಯೆಹೋವ ದೇವರು ತೆಗೆದುಕೊಂಡರು; ಯೆಹೋವ ದೇವರ ನಾಮಕ್ಕೆ ಸ್ತೋತ್ರವಾಗಲಿ.”</verse>
				<verse number="22">ಇದೆಲ್ಲದರಲ್ಲಿಯೂ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪು ಹೊರಿಸಲಿಲ್ಲ.</verse>
			</chapter>
			<chapter number="2">
				<verse number="1">ಇನ್ನೊಂದು ದಿನ, ದೇವದೂತರು ಯೆಹೋವ ದೇವರ ಮುಂದೆ ಒಟ್ಟಾಗಿ ಸೇರಿ ಬಂದಿದ್ದರು. ಸೈತಾನನು ಸಹ ಅವರೊಂದಿಗೆ ಯೆಹೋವ ದೇವರ ಮುಂದೆ ಬಂದನು.</verse>
				<verse number="2">ಆಗ ಯೆಹೋವ ದೇವರು ಸೈತಾನನಿಗೆ, “ನೀನು ಎಲ್ಲಿಂದ ಬಂದೆ?” ಎಂದರು. ಸೈತಾನನು ಯೆಹೋವ ದೇವರಿಗೆ, “ಭೂಲೋಕದಲ್ಲಿ ಸಂಚರಿಸುತ್ತಾ, ಅಲ್ಲಲ್ಲಿ ತಿರುಗಾಡುತ್ತಾ ಇದ್ದು ಬಂದೆನು,” ಎಂದನು.</verse>
				<verse number="3">ಆಗ ಯೆಹೋವ ದೇವರು ಸೈತಾನನಿಗೆ, “ನನ್ನ ಸೇವಕ ಯೋಬನನ್ನು ಗಮನಿಸಿದೆಯಾ? ಅವನು ನಿರ್ದೋಷಿಯೂ, ಯಥಾರ್ಥನೂ, ದೇವರಿಗೆ ಭಯಪಡುವವನೂ, ಕೇಡನ್ನು ತೊರೆಯುವವನೂ ಆಗಿದ್ದಾನೆ. ಅವನ ಹಾಗೆ ಭೂಲೋಕದಲ್ಲಿ ಒಬ್ಬರೂ ಇಲ್ಲ. ಅವನನ್ನು ಕಾರಣವಿಲ್ಲದೆ ನಾಶಮಾಡುವುದಕ್ಕೆ ನೀನು ನನಗೆ ಸೂಚಿಸಿದರೂ, ಅವನು ಇನ್ನೂ ತನ್ನ ಯಥಾರ್ಥತೆಯಲ್ಲಿ ದೃಢವಾಗಿದ್ದಾನೆ,” ಎಂದರು.</verse>
				<verse number="4">ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ,” ಎಂದ ಹಾಗೆ, “ಒಬ್ಬ ಮನುಷ್ಯನು ತನ್ನ ಪ್ರಾಣ ಉಳಿಸಿಕೊಳ್ಳಲು ತನ್ನ ಸರ್ವಸ್ವವನ್ನೂ ಕೊಡುವನು.</verse>
				<verse number="5">ಆದರೆ ಈಗ ನಿಮ್ಮ ಕೈಚಾಚಿ, ಅವನ ಎಲುಬನ್ನೂ ಅವನ ಮಾಂಸವನ್ನೂ ಹೊಡೆದರೆ, ಅವನು ನಿಮ್ಮ ಮುಖದೆದುರಿಗೇ ನಿಮ್ಮನ್ನು ಶಪಿಸುವನು,” ಎಂದನು.</verse>
				<verse number="6">ಆಗ ಯೆಹೋವ ದೇವರು ಸೈತಾನನಿಗೆ, “ಹಾಗಾದರೆ ಅವನು ನಿನ್ನ ಕೈಯಲ್ಲಿ ಇದ್ದಾನೆ. ಅವನ ಪ್ರಾಣವನ್ನು ಮಾತ್ರ ಮುಟ್ಟಬಾರದು,” ಎಂದರು.</verse>
				<verse number="7">ಆಗ ಸೈತಾನನು ಯೆಹೋವ ದೇವರ ಸನ್ನಿಧಾನದಿಂದ ಹೊರಟುಹೋಗಿ, ಯೋಬನಿಗೆ ಅಂಗಾಲಿನಿಂದ ನೆತ್ತಿಯವರೆಗೆ ಕೆಟ್ಟ ಹುಣ್ಣುಗಳು ಬರುವಂತೆ ಅವನನ್ನು ಬಾಧಿಸಿದನು.</verse>
				<verse number="8">ಯೋಬನು ಮುರಿದ ಬೋಕಿಯನ್ನು ತೆಗೆದುಕೊಂಡು ತನ್ನ ಮೈಯನ್ನು ಕೆರೆದುಕೊಳ್ಳುತ್ತಾ ಬೂದಿಯ ಮೇಲೆ ಕುಳಿತುಕೊಂಡನು.</verse>
				<verse number="9">ಆಗ ಯೋಬನ ಹೆಂಡತಿಯು ಅವನಿಗೆ, “ನೀನು ಇನ್ನೂ ಯಥಾರ್ಥತ್ವವನ್ನು ಬಿಡಲಿಲ್ಲವೇ? ದೇವರನ್ನು ಶಪಿಸಿ ಸತ್ತುಹೋಗು,” ಎಂದಳು.</verse>
				<verse number="10">ಆದರೆ ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ? ನಾವು ದೇವರಿಂದ ಒಳ್ಳೆಯದನ್ನು ಹೊಂದಿದ್ದೇವೆ, ಕಷ್ಟವನ್ನು ಹೊಂದಬಾರದೋ?” ಎಂದನು. ಇವೆಲ್ಲವುಗಳಲ್ಲಿಯೂ ಪಾಪದ ಮಾತೊಂದೂ ಯೋಬನ ಬಾಯಿಂದ ಬರಲಿಲ್ಲ.</verse>
				<verse number="11">ಯೋಬನ ಮೂವರು ಸ್ನೇಹಿತರು, ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು ಅವನಿಗೆ ಬಂದ ಈ ಎಲ್ಲಾ ಕಷ್ಟನಷ್ಟವನ್ನು ಕುರಿತು ಕೇಳಿ, ಯೋಬನಿಗೆ ಸಂತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸುವುದಕ್ಕೆ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡು, ತಮ್ಮ ತಮ್ಮ ಸ್ಥಳಗಳಿಂದ ಅವನ ಬಳಿಗೆ ಬಂದರು.</verse>
				<verse number="12">ಅವರು ಯೋಬನನ್ನು ದೂರದಿಂದ ನೋಡಿದಾಗ, ಅವನನ್ನು ಗುರುತಿಸಲು ಸಾಧ್ಯವಾಗಲಿಲ್ಲ. ಅವರು ಗಟ್ಟಿಯಾಗಿ ಅಳಲು ಪ್ರಾರಂಭಿಸಿದರು. ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಧೂಳನ್ನು ತಮ್ಮ ತಲೆಯ ಮೇಲೆ ಸುರಿಸಿಕೊಂಡರು.</verse>
				<verse number="13">ಅನಂತರ ಯೋಬನು ಅನುಭವಿಸುತ್ತಿದ್ದ ಬಾಧೆಯು ಎಷ್ಟು ಕ್ರೂರವೆಂದು ಅವರು ನೋಡಿ, ಅವನ ಸಂಗಡ ಏಳು ಹಗಲು, ಏಳು ರಾತ್ರಿ ನೆಲದ ಮೇಲೆ ಕುಳಿತುಕೊಂಡಿದ್ದರು. ಒಬ್ಬನಾದರೂ ಒಂದು ಮಾತನ್ನೂ ಯೋಬನಿಗೆ ಹೇಳಲಿಲ್ಲ.</verse>
			</chapter>
			<chapter number="3">
				<verse number="1">ಆಮೇಲೆ ಯೋಬನು ತನ್ನ ಬಾಯಿತೆರೆದು, ತನ್ನ ಜನ್ಮ ದಿವಸವನ್ನು ಶಪಿಸಿದನು.</verse>
				<verse number="2">ಯೋಬನು ಇಂತೆಂದನು:</verse>
				<verse number="3">“ನಾನು ಹುಟ್ಟಿದ ದಿವಸವೂ, ‘ಗಂಡು ಮಗುವನ್ನು ಗರ್ಭಧರಿಸಿದೆ!’ ಎಂದು ಹೇಳಿದ ರಾತ್ರಿಯೂ ನಾಶವಾಗಲಿ.</verse>
				<verse number="4">ಆ ದಿವಸವು ಕತ್ತಲಾಗಲಿ, ಮೇಲಿನಿಂದ ದೇವರು ಅದನ್ನು ಲೆಕ್ಕಿಸದಿರಲಿ, ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ.</verse>
				<verse number="5">ಕತ್ತಲೂ ಕಾರ್ಗತ್ತಲೂ ಆ ದಿನವನ್ನು ವಶಮಾಡಿಕೊಳ್ಳಲಿ; ಮೋಡವು ಅದರ ಮೇಲೆ ಕವಿಯಲಿ; ಕತ್ತಲೆ ಅದನ್ನು ಭಯಪಡಿಸಲಿ.</verse>
				<verse number="6">ಆ ರಾತ್ರಿಯನ್ನು ಅಂಧಕಾರವು ಮುತ್ತಲಿ; ವರ್ಷದ ದಿನಗಳಲ್ಲಿ ಆ ದಿನವನ್ನು ಸೇರಿಸದಿರಲಿ. ಅದು ತಿಂಗಳುಗಳನ್ನು ಲೆಕ್ಕಿಸದಿರಲಿ.</verse>
				<verse number="7">ಇಗೋ ಆ ರಾತ್ರಿಯು ಬಂಜೆಯಾಗಲಿ; ಅದರಲ್ಲಿ ಆನಂದ ಧ್ವನಿಯು ಕೇಳದಿರಲಿ.</verse>
				<verse number="8">ಘಟಸರ್ಪವನ್ನು ಎಬ್ಬಿಸುವುದರಲ್ಲಿಯೂ ದಿನಗಳನ್ನು ಶಪಿಸುವುದರಲ್ಲಿಯೂ ನಿಪುಣರಾದವರು ಆ ದಿನವನ್ನು ಶಪಿಸಲಿ.</verse>
				<verse number="9">ಅದರ ಮುಂಜಾನೆಯ ನಕ್ಷತ್ರಗಳು ಕಪ್ಪಾಗಲಿ; ಅದು ಬೆಳಕಿಗೋಸ್ಕರ ಕಾದುಕೊಂಡರೂ ಬಾರದಿರಲಿ ಅರುಣೋದಯವು ಆ ದಿನವನ್ನು ನೋಡದಿರಲಿ.</verse>
				<verse number="10">ಏಕೆಂದರೆ ಆ ದಿನವು ನನ್ನ ತಾಯಿಯ ಗರ್ಭದ ಬಾಗಿಲನ್ನು ಮುಚ್ಚಲಿಲ್ಲ, ದುಃಖವನ್ನು ನನ್ನ ಕಣ್ಣುಗಳಿಗೆ ಮರೆಮಾಡಲಿಲ್ಲ.</verse>
				<verse number="11">“ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ? ನಾನು ಗರ್ಭದಿಂದ ಬಂದಾಗಲೇ ಏಕೆ ಪ್ರಾಣ ಬಿಡಲಿಲ್ಲ?</verse>
				<verse number="12">ತಾಯಿಯ ಮಡಿಲು ನನ್ನನ್ನು ಸ್ವಿಕರಿಸಿದ್ದೇಕೆ? ತಾಯಿಯ ಮೊಲೆಹಾಲು ಕುಡಿಯಮಾಡಿದ್ದೇಕೆ?</verse>
				<verse number="13">ಆಗ ಸತ್ತಿದ್ದರೆ ನಾನು ಶಾಂತವಾಗಿ ಮಲಗಿಕೊಳ್ಳುತ್ತಿದ್ದೆನು; ನಾನು ವಿಶ್ರಾಂತಿಯಲ್ಲಿರುತ್ತಿದ್ದೆನು.</verse>
				<verse number="14">ಭೂಲೋಕದಲ್ಲಿ ಹಾಳುಬಿದ್ದ ಪಟ್ಟಣಗಳನ್ನು ತಮಗಾಗಿ ಕಟ್ಟಿಸಿಕೊಂಡ ರಾಜರೊಂದಿಗೂ ಮಂತ್ರಿಗಳೊಡನೆಯೂ ನಾನಿರುತ್ತಿದ್ದೆನು.</verse>
				<verse number="15">ಬಂಗಾರವನ್ನು ಕೂಡಿಸಿಟ್ಟು, ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡ ವಿಶ್ರಮಿಸಿಕೊಳ್ಳುತ್ತಿದ್ದೆನು.</verse>
				<verse number="16">ಗರ್ಭಸ್ರಾವವಾಗಿ ಹೂಣಿಟ್ಟ ಪಿಂಡದಂತೆಯೂ ಬೆಳಕನ್ನು ನೋಡದ ಕೂಸುಗಳಂತೆಯೂ ನಾನೇಕೆ ಆಗಲಿಲ್ಲ?</verse>
				<verse number="17">ಅಲ್ಲಿ ದುಷ್ಟರು ತೊಂದರೆ ಕೊಡುವುದು ಇರುವುದಿಲ್ಲ. ಶಕ್ತಿ ಕುಂದಿದವರು ಅಲ್ಲಿ ವಿಶ್ರಾಂತಿ ಹೊಂದಿರುತ್ತಾರೆ.</verse>
				<verse number="18">ಸೆರೆಯವರು ಕೂಡ ಶಾಂತವಾಗಿರುತ್ತಾರೆ; ಬಾಧೆಪಡಿಸುವವನ ಶಬ್ದವನ್ನು ಕೇಳುವುದಿಲ್ಲ.</verse>
				<verse number="19">ಅಲ್ಲಿ ಕಿರಿಯರು ಹಿರಿಯರು ಎಂಬ ಭೇದ ಇಲ್ಲಾ; ಗುಲಾಮರು ಯಜಮಾನರಿಂದ ಬಿಡುಗಡೆಯಾಗಿರುತ್ತಾರೆ.</verse>
				<verse number="20">“ಕಷ್ಟದಲ್ಲಿ ಇರುವವನಿಗೆ ಬೆಳಕೂ ಕಹಿ ಮನಸ್ಸುಳ್ಳವರಿಗೆ ಜೀವವನ್ನು ಕೊಡುವುದೇಕೆ?</verse>
				<verse number="21">ಅವರು ನಿಕ್ಷೇಪಕ್ಕಾಗಿ ಅಗಿಯುವ ಆಶೆಗಿಂತಲೂ ಹೆಚ್ಚಾದ ಆಶೆಯಿಂದ ಮರಣವನ್ನು ಹಾರೈಸಿ ಹುಡುಕಿದರೂ ಅದು ದೊರೆಯದು.</verse>
				<verse number="22">ಅವರು ಸಮಾಧಿ ಸೇರಿದ ಮೇಲೆ ಸಂತೋಷ ಸಂಭ್ರಮದಿಂದ ಹರ್ಷಿಸುವರೋ?</verse>
				<verse number="23">ದೇವರು ಸುತ್ತಲೂ ಬೇಲಿಹಾಕಿ, ದಾರಿ ಮುಚ್ಚಿದ ಮೇಲೆ ಅವರಿಗೆ ಬೆಳಕು ಏಕೆ?</verse>
				<verse number="24">ನಿಟ್ಟುಸಿರೇ ನನ್ನ ದೈನಂದಿನ ಆಹಾರವಾಗಿದೆ; ನನ್ನ ನರಳಾಟವು ಜಲಧಾರೆಯಂತಿದೆ.</verse>
				<verse number="25">ನನಗೆ ಭಯ ಹುಟ್ಟಿದೊಡನೆ ಆಪತ್ತು ಬಂದೊದಗುತ್ತದೆ; ಯಾವುದಕ್ಕೆ ಹೆದರುತ್ತೇನೋ, ಅದೇ ತಪ್ಪದೆ ಸಂಭವಿಸುತ್ತದೆ.</verse>
				<verse number="26">ನನಗೆ ಶಾಂತಿ ಇಲ್ಲ, ವಿಶ್ರಾಂತಿಯೂ ಇಲ್ಲ; ನಾನು ಸಮಾಧಾನವಾಗಿಯೂ ಇಲ್ಲ, ಯಾವಾಗಲೂ ಕಳವಳವೇ ಇರುತ್ತದೆ.”</verse>
			</chapter>
			<chapter number="4">
				<verse number="1">ತೇಮಾನ್ಯನಾದ ಎಲೀಫಜನು ಉತ್ತರಕೊಟ್ಟನು:</verse>
				<verse number="2">“ಒಬ್ಬನು ನಿನ್ನ ಸಂಗಡ ಮಾತಾಡ ತೊಡಗಿದರೆ, ನಿನಗೆ ಬೇಸರಿಕೆ ಉಂಟಾಗುವುದೋ? ಮಾತಾಡದೆ ಸುಮ್ಮನೆ ಇರುವುದಕ್ಕೆ ಯಾರಿಂದಾದೀತು?</verse>
				<verse number="3">ಅನೇಕರಿಗೆ ನೀನು ಶಿಕ್ಷಣ ಕೊಟ್ಟದ್ದನ್ನೂ ಬಲಹೀನ ಕೈಗಳನ್ನು ಬಲಪಡಿಸಿದ್ದನ್ನೂ ಯೋಚಿಸು.</verse>
				<verse number="4">ಎಡವಿ ಬೀಳುವವನನ್ನು ನಿನ್ನ ನುಡಿಗಳು ಎದ್ದು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲಪಡಿಸಿದೆ.</verse>
				<verse number="5">ಈಗ ಆಪತ್ತು ನಿನ್ನ ಮೇಲೆ ಬಂದದ್ದರಿಂದ ನೀನು ದಣಿಯುತ್ತಿರುವೆ; ನಿನಗೂ ಕಡುಕಷ್ಟ ತಟ್ಟಿದ್ದರಿಂದ ಕಳವಳಪಡುತ್ತಿರುವೆ.</verse>
				<verse number="6">ನಿನ್ನ ಭಯಭಕ್ತಿಯೇ ನಿನಗೆ ಭರವಸೆಯೂ ನಿನ್ನ ಸನ್ಮಾಮಾರ್ಗಗಳು ನಿನ್ನ ನಿರೀಕ್ಷೆಯೂ ಆಗಿರಬೇಕಲ್ಲವೇ?</verse>
				<verse number="7">“ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿವಂತರು ಅಳಿದು ಹೋದದ್ದು ಎಲ್ಲಿ?</verse>
				<verse number="8">ನಾನು ಕಂಡ ಹಾಗೆ ಕೆಟ್ಟತನವನ್ನು ಊಳುವವರೂ ದುಷ್ಟತನವನ್ನು ಬಿತ್ತುವವರೂ ಅದನ್ನೇ ಕೊಯ್ಯುವರು.</verse>
				<verse number="9">ದೇವರ ಉಸಿರಿನಿಂದ ಅವರು ಕ್ಷಯಿಸಿ ಹೋಗುತ್ತಾರೆ. ದೇವರ ದಂಡನೆಯಿಂದ ಅಂಥವರು ನಾಶವಾಗುತ್ತಾರೆ;</verse>
				<verse number="10">ಸಿಂಹಗಳು ಗರ್ಜಿಸಬಹುದು ಮತ್ತು ಕೂಗಬಹುದು, ಆದರೂ ಪ್ರಾಯದ ಸಿಂಹಗಳ ಹಲ್ಲುಗಳು ಮುರಿದುಹೋಗಿವೆ.</verse>
				<verse number="11">ಸಿಂಹವು ಬೇಟೆ ಇಲ್ಲದ್ದರಿಂದ ನಾಶವಾಗುತ್ತದೆ; ಸಿಂಹದ ಮರಿಗಳು ಚದರಿಹೋಗುವವು.</verse>
				<verse number="12">“ಒಂದು ಮಾತು ನನಗೆ ಗುಟ್ಟಾಗಿ ತಿಳಿದುಬಂತು, ಅದರ ಪಿಸುಮಾತು ನನ್ನ ಕಿವಿಗೆ ಬಿತ್ತು.</verse>
				<verse number="13">ರಾತ್ರಿ ಕನಸಿನ ಆಲೋಚನೆಗಳಲ್ಲಿಯೂ ಗಾಢನಿದ್ರೆಯು ಜನರಿಗೆ ಹತ್ತುವಾಗಲೂ</verse>
				<verse number="14">ಭಯವೂ ನಡುಕವೂ ನನ್ನನ್ನು ಹಿಡಿದು, ನನ್ನ ಎಲ್ಲಾ ಎಲುಬುಗಳನ್ನು ನಡುಗಿಸಿತು.</verse>
				<verse number="15">ಒಂದು ಆತ್ಮವು ನನ್ನ ಮುಂದೆ ಹಾದುಹೋಯಿತು, ಆಗ ನನ್ನ ಮೈ ರೋಮವೆಲ್ಲಾ ನಿಮಿರಿ ನಿಂತವು.</verse>
				<verse number="16">ಆ ಆತ್ಮ ನಿಂತಿದ್ದರೂ ಅದು ಏನೆಂದು ನನಗೆ ತಿಳಿಯಲಿಲ್ಲ. ಅದರ ರೂಪವು ನನ್ನ ಕಣ್ಣು ಮುಂದೆ ನಿಂತಿತ್ತು, ಆಗ ಒಂದು ಸೂಕ್ಷ್ಮ ಸ್ವರವು ಕೇಳಿಸಿತು:</verse>
				<verse number="17">‘ಮನುಷ್ಯನು ದೇವರಿಗಿಂತ ಹೆಚ್ಚು ನೀತಿವಂತನಾಗಿರಲು ಸಾಧ್ಯವೇ? ಮಾನವನು ಸೃಷ್ಟಿಕರ್ತ ದೇವರಿಗಿಂತಲೂ ಶುದ್ಧನಾಗಿರಲು ಸಾಧ್ಯವೇ?</verse>
				<verse number="18">ತಮ್ಮ ಸೇವಕರಲ್ಲಿ ದೇವರು ನಂಬದೆ, ತಮ್ಮ ದೂತರಲ್ಲಿಯೇ ತಪ್ಪು ಕಂಡಿರಲು,</verse>
				<verse number="19">ಧೂಳಿನಲ್ಲಿರುವ ಅಸ್ತಿವಾರದ ಮೇಲೆ ಮಣ್ಣಿನ ಮನೆಗಳ ನಿವಾಸಿಗಳು, ನುಸಿಗಿಂತಲೂ ಹೆಚ್ಚಾಗಿ ಜಜ್ಜಿಹೋದವರು, ಇನ್ನೂ ಹೆಚ್ಚಾಗಿ ದಂಡನೆಗೆ ಒಳಪಡುವರಲ್ಲವೇ?</verse>
				<verse number="20">ಬೆಳಿಗ್ಗೆಯಿಂದ ಸಂಜೆಯವರೆಗೆ ಜೀವಿಸಿದ ಅವರು ನಾಶವಾಗುತ್ತಾರೆ; ಯಾರ ಗಮನಕ್ಕೂ ಬಾರದೇ ನಿತ್ಯ ನಾಶವಾಗುತ್ತಾರೆ.</verse>
				<verse number="21">ಅವರ ಗುಡಾರದ ಹಗ್ಗವು ಬಿಚ್ಚಿಹೋಗುವುದು, ಅವರು ಜ್ಞಾನವಿಲ್ಲದೆ ಸಾಯುವರು.’</verse>
			</chapter>
			<chapter number="5">
				<verse number="1">“ಈಗ ನೀನು ಕರೆದರೆ, ನಿನಗೆ ಉತ್ತರ ಕೊಡುವವರು ಇದ್ದಾರೋ? ಪರಿಶುದ್ಧರಲ್ಲಿ ಯಾರ ಕಡೆಗೆ ನೀನು ತಿರುಗಿಕೊಳ್ಳುವೆ?</verse>
				<verse number="2">ಮೂಢನನ್ನು ಅಸಮಾಧಾನವು ಕೊಲ್ಲುವುದು; ಮುಗ್ಧನನ್ನು ಅಸುಹೆ ಸಾಯುವಂತೆ ಮಾಡುವುದು.</verse>
				<verse number="3">ಮೂಢನು ಬೇರೂರುವುದನ್ನು ನಾನು ನೋಡಿದೆನು, ಕೂಡಲೇ ಅವನ ಮನೆ ಶಾಪಕ್ಕಿಡಾಗುವುದನ್ನು ಕಂಡೆನು.</verse>
				<verse number="4">ಅವನ ಮಕ್ಕಳು ಭದ್ರತೆಯಿಲ್ಲದವರಾಗುವರು; ಬಿಡಿಸತಕ್ಕವರಿಲ್ಲದೆ ಅವರು ನ್ಯಾಯಸ್ಥಾನದಲ್ಲಿ ಸೋತುಹೋಗುವರು.</verse>
				<verse number="5">ಹಸಿದವರು ಅವನ ಪೈರನ್ನು ತಿಂದುಬಿಡುವರು; ಮುಳ್ಳುಬೇಲಿ ಹಾಕಿದ್ದರೂ ಅದನ್ನು ತೆಗೆದುಕೊಳ್ಳುವರು; ಅವನ ಆಸ್ತಿಯನ್ನು ಬಾಯಾರಿಕೆಯಾದವರು ನುಂಗಿಬಿಡುವರು.</verse>
				<verse number="6">ಮಣ್ಣಿನಿಂದ ಕಷ್ಟಗಳು ಹುಟ್ಟುವುದಿಲ್ಲ; ಭೂಮಿಯಿಂದ ತೊಂದರೆ ಮೊಳೆಯುವುದಿಲ್ಲ.</verse>
				<verse number="7">ಆದರೂ ಕಿಡಿಗಳು ಹಾರುವ ಪ್ರಕಾರವೇ, ಮನುಷ್ಯನು ಶ್ರಮೆಹೊಂದಲು ಹುಟ್ಟುತ್ತಾನೆ.</verse>
				<verse number="8">“ನಾನು ನೀನಾಗಿದ್ದರೆ ದೇವರಿಗೇ ಬೇಡಿಕೊಳ್ಳುತ್ತಿದ್ದೆ; ನನ್ನ ವಿಷಯವನ್ನು ದೇವರ ಮುಂದೆಯೇ ಇಡುತ್ತಿದ್ದೆ.</verse>
				<verse number="9">ದೇವರು ಸಂಶೋಧನೆ ಮಾಡಲಾಗದಷ್ಟು ಮಹಾಕಾರ್ಯಗಳನ್ನೂ, ಅಸಂಖ್ಯವಾದ ಅದ್ಭುತ ಕೃತ್ಯಗಳನ್ನೂ ಮಾಡುತ್ತಾರೆ.</verse>
				<verse number="10">ಭೂಮಿಯ ಮೇಲೆ ಮಳೆಯನ್ನು ಕೊಡುತ್ತಾರೆ; ಹೊಲಗಳ ಮೇಲೆ ನೀರನ್ನು ಸುರಿಸುತ್ತಾರೆ.</verse>
				<verse number="11">ದೇವರು ತಗ್ಗಿದವರನ್ನು ಉನ್ನತದಲ್ಲಿಡುತ್ತಾರೆ; ದುಃಖವುಳ್ಳವರನ್ನು ಭದ್ರತೆಗೆ ಒಯ್ಯುತ್ತಾರೆ.</verse>
				<verse number="12">ದೇವರು ವಂಚಕರ ಯೋಜನೆಗಳನ್ನು ಭಂಗಪಡಿಸುತ್ತಾರೆ. ಕುಯುಕ್ತಿಯುಳ್ಳವರ ಕೈಗಳು ಯಾವುದೇ ಯಶಸ್ಸನ್ನು ಸಾಧಿಸದಂತೆ ಮಾಡುತ್ತಾರೆ.</verse>
				<verse number="13">ದೇವರು ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿಯೇ ಹಿಡಿಯುತ್ತಾರೆ, ಮತ್ತು ಕುತಂತ್ರಿಯ ಯೋಜನೆಗಳನ್ನು ನಿರರ್ಥಕಮಾಡುತ್ತಾರೆ.</verse>
				<verse number="14">ಕುತಂತ್ರರು ಹಗಲಿನಲ್ಲಿಯೇ ಕತ್ತಲೆಯನ್ನು ಸಂಧಿಸುತ್ತಾರೆ; ಮಧ್ಯಾಹ್ನದಲ್ಲಿ ರಾತ್ರಿಯಂತೆ ತಡಕಾಡುತ್ತಾರೆ.</verse>
				<verse number="15">ದೇವರು ದಿಕ್ಕಿಲ್ಲದವರನ್ನು ದಬ್ಬಾಳಿಕೆಮಾಡುವವರ ಬಾಯಿಯೆಂಬ ಖಡ್ಗದಿಂದಲೂ, ಬಲಿಷ್ಠರ ಕೈಯೊಳಗಿಂದಲೂ ರಕ್ಷಿಸುತ್ತಾರೆ.</verse>
				<verse number="16">ಆದ್ದರಿಂದ ಬಡವರಿಗೆ ನಿರೀಕ್ಷೆಯುಂಟಾಗುವುದು; ಅನ್ಯಾಯವು ತನ್ನ ಬಾಯಿ ಮುಚ್ಚಿಕೊಳ್ಳುವುದು.</verse>
				<verse number="17">“ಇಗೋ, ದೇವರು ಗದರಿಸುವ ಮನುಷ್ಯನು ಧನ್ಯನು; ಸರ್ವಶಕ್ತರ ಶಿಕ್ಷೆಯನ್ನು ತಿರಸ್ಕರಿಸಬೇಡ.</verse>
				<verse number="18">ಗಾಯ ಮಾಡುವವರೂ ಗಾಯ ಕಟ್ಟುವವರೂ ದೇವರೇ; ಹೊಡೆಯುವುದೂ ಗುಣಪಡಿಸುವುದೂ ದೇವರ ಕೈಯೇ.</verse>
				<verse number="19">ದೇವರು ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವರು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.</verse>
				<verse number="20">ಬರದಲ್ಲಿ ನಿನ್ನನ್ನು ಮರಣದೊಳಗಿಂದಲೂ, ಯುದ್ಧದಲ್ಲಿ ಖಡ್ಗದ ಬಲದಿಂದಲೂ ದೇವರು ವಿಮೋಚಿಸುವರು.</verse>
				<verse number="21">ನೀನು ನಾಲಿಗೆಯೆಂಬ ಚಾಟಿಹೊಡೆತಕ್ಕೆ ಮರೆಯಾಗಿರುವೆ; ನಾಶ ಬಂದಾಗ ನೀನು ಭಯಪಡುವುದಿಲ್ಲ.</verse>
				<verse number="22">ನೀನು ನಾಶಕ್ಕೂ, ಕ್ಷಾಮಕ್ಕೂ ನಗುವೆ; ಕಾಡುಮೃಗಗಳಿಗೂ ನೀನು ಭಯಪಡುವುದಿಲ್ಲ.</verse>
				<verse number="23">ಹೊಲದ ಕಲ್ಲುಗಳ ಸಂಗಡ ನಿನಗೆ ಒಪ್ಪಂದ ಇರುವುದು; ಕಾಡು ಮೃಗಗಳೂ ನಿನ್ನೊಂದಿಗೆ ಸಮಾಧಾನವಾಗಿರುವವು.</verse>
				<verse number="24">ನಿನ್ನ ಗುಡಾರವು ಕ್ಷೇಮವಾಗಿದೆ ಎಂದು ನೀನು ತಿಳಿದುಕೊಳ್ಳುವೆ, ನಿನ್ನ ಆಸ್ತಿಯನ್ನು ನೀನು ಪರೀಕ್ಷಿಸುವಾಗ ಏನೂ ಕಡಿಮೆಯಾಗಿರುವುದಿಲ್ಲ.</verse>
				<verse number="25">ನಿನ್ನ ಸಂತತಿಯು ಬಹಳವಾಗಿದೆ ಎಂದೂ, ನಿನ್ನ ಸಂತಾನವು ಭೂಮಿಯ ಹುಲ್ಲಿನಂತಿದೆ ಎಂದೂ ತಿಳಿದುಕೊಳ್ಳುವೆ.</verse>
				<verse number="26">ಸಿವುಡು ತನ್ನ ಕಾಲದಲ್ಲಿ ಮನೆಗೆ ಸೇರುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿ ಸೇರುವೆ.</verse>
				<verse number="27">“ಇದನ್ನು ನಾವು ಪರಿಶೋಧಿಸಿದ್ದೇವೆ; ಇದು ಸತ್ಯವಾದದ್ದು, ಇದನ್ನು ನೀನು ಕೇಳಿ ತಿಳಿದುಕೋ, ಇದನ್ನು ನೀನು ಅನ್ವಯಿಸು.”</verse>
			</chapter>
			<chapter number="6">
				<verse number="1">ಅದಕ್ಕೆ ಯೋಬನು ಉತ್ತರವಾಗಿ ಹೀಗೆಂದನು:</verse>
				<verse number="2">“ಅಯ್ಯೋ, ನನ್ನ ವ್ಯಥೆಯನ್ನು ತೂಕಮಾಡಿ ನೋಡಿದರೆ ಒಳ್ಳೇದು, ನನ್ನ ದುಃಖವನ್ನೆಲ್ಲಾ ತಕ್ಕಡಿಗೆ ಹಾಕಿದರೆ ಲೇಸು.</verse>
				<verse number="3">ಏಕೆಂದರೆ ನನ್ನ ಕಷ್ಟ ಈಗಲೇ ಸಮುದ್ರದ ಮರಳಿಗಿಂತ ಭಾರವಾಗಿದೆ; ನನ್ನ ಮಾತುಗಳು ದುಡುಕಿದ್ದರಲ್ಲಿ ಆಶ್ಚರ್ಯವಿಲ್ಲ.</verse>
				<verse number="4">ಸರ್ವಶಕ್ತರ ಬಾಣಗಳು ನನ್ನಲ್ಲಿ ನಾಟಿವೆ; ಅವುಗಳ ವಿಷವನ್ನು ನನ್ನ ಆತ್ಮವು ಹೀರುತ್ತಿದೆ; ದೇವರ ವಿಷಯವಾದ ಹೆದರಿಕೆಗಳು ನನ್ನನ್ನು ಸುತ್ತುವರೆದಿವೆ.</verse>
				<verse number="5">ಹುಲ್ಲು ಇರುವಾಗ ಕಾಡುಕತ್ತೆಯು ಅರಚುವುದೋ? ಮೇವು ಇದ್ದರೆ ಎತ್ತು ಕೂಗುವುದೋ?</verse>
				<verse number="6">ರುಚಿ ಇಲ್ಲದ ಆಹಾರನ್ನು ಉಪ್ಪಿಲ್ಲದೆ ತಿನ್ನಬಹುದೋ? ಕೋಳಿ ಮೊಟ್ಟೆಯ ಲೋಳೆಯಲ್ಲಿ ರುಚಿಯುಂಟೋ?</verse>
				<verse number="7">ಮುಟ್ಟಲು ಕೂಡ ನನಗೆ ಇಷ್ಟವಾಗಲಿಲ್ಲ, ಅಂಥ ಆಹಾರವು ನನಗೆ ಬೇಸರ.</verse>
				<verse number="8">“ದೇವರು ನನ್ನ ವಿಜ್ಞಾಪನೆಯನ್ನು ಲಾಲಿಸಿದರೆ ಸಾಕು, ನಾನು ನಿರೀಕ್ಷಿಸಿದ್ದನ್ನು ದೇವರು ಕೊಟ್ಟರೆ ಲೇಸು.</verse>
				<verse number="9">ನನ್ನನ್ನು ಜಜ್ಜುವುದು ದೇವರಿಗೆ ಮೆಚ್ಚಿಗೆಯಾದರೆ, ದೇವರು ತಮ್ಮ ಕೈಚಾಚಿ ನನ್ನ ಪ್ರಾಣವನ್ನು ತೆಗೆದುಕೊಳ್ಳಲಿ.</verse>
				<verse number="10">ಹಾಗಿದ್ದರೆ, ಇದು ನನಗೆ ಆದರಣೆಯಾಗಿರುವುದು; ಪರಿಶುದ್ಧ ದೇವರ ಮಾತುಗಳನ್ನು ನನ್ನ ಅತ್ಯಂತ ಯಾತನೆಯಲ್ಲಿಯೂ ನಾನು ನಿರಾಕರಿಸಲಿಲ್ಲ; ಇದರಿಂದ ಬರುವ ಆನಂದವು ನನಗೆ ಇನ್ನೂ ಇರುವುದು.</verse>
				<verse number="11">“ನಾನು ನಿರೀಕ್ಷೆಯಿಂದಿರಲು, ನನಗೆ ಶಕ್ತಿ ಎಲ್ಲಿದೆ? ನಾನು ಸಹನೆಯಿಂದಿರಲು, ನನಗೆ ಭವಿಷ್ಯ ಏನಿದೆ?</verse>
				<verse number="12">ನನ್ನ ಶಕ್ತಿ ಕಲ್ಲುಗಳ ಶಕ್ತಿಯೋ? ನನ್ನ ಶರೀರ ಕಂಚಿನ ಶರೀರವೋ?</verse>
				<verse number="13">ನನಗೆ ಸಹಾಯವು ಇಲ್ಲದೆ ಹೋಗಿದೆಯಲ್ಲಾ? ಈಗ ಯಶಸ್ಸು ಸಹ ನನ್ನಿಂದ ತೊಲಗಿಹೋಗಿದೆಯಲ್ಲಾ.</verse>
				<verse number="14">“ಒಬ್ಬನು ಸರ್ವಶಕ್ತರ ಮೇಲಣ ಭಯಭಕ್ತಿಯನ್ನು ಬಿಡುವವನಾಗಿದ್ದರೂ, ಅವನ ಮಿತ್ರನು ಅವನಿಗೆ ದಯೆ ತೋರಿಸಬೇಕು.</verse>
				<verse number="15">ಆದರೆ ನನ್ನ ಸಹೋದರರಾದರೋ, ಉಕ್ಕಿ ಹರಿಯುವ ತೊರೆಯಂತೆಯೂ, ಬತ್ತಿದ ಹಳ್ಳದಂತೆಯೂ ಅಪನಂಬಿಗಸ್ತರಾಗಿದ್ದಾರೆ.</verse>
				<verse number="16">ಅವು ಮಂಜುಗಡ್ಡೆಯಿಂದ ಕಪ್ಪಾಗಿವೆ, ಅವುಗಳಲ್ಲಿ ಹಿಮ ಅಡಗಿಕೊಳ್ಳುತ್ತದೆ.</verse>
				<verse number="17">ಉಷ್ಣ ಸಮಯದಲ್ಲಿ ಅವು ಹರಿಯುವದಿಲ್ಲ; ಸೆಕೆಯಾದಾಗ ಬತ್ತಿ ಅದರ ಸ್ಥಳದಿಂದ ಮಾಯವಾಗುತ್ತವೆ.</verse>
				<verse number="18">ಇಂಥಾ ತೊರೆಗಳ ಮಾರ್ಗವಾಗಿ ಪ್ರಯಾಣ ಮಾಡುವ ವರ್ತಕರ ಗುಂಪುಗಳು, ದಾರಿತಪ್ಪಿ ಮರಳುಗಾಡಿನಲ್ಲಿ ಅಲೆದು ನಾಶವಾಗುತ್ತವೆ.</verse>
				<verse number="19">ತೇಮದ ವರ್ತಕರ ಗುಂಪುಗಳು ನೀರಿಗಾಗಿ ಹಂಬಲಿಸುತ್ತಾರೆ; ಶೆಬದ ವ್ಯಾಪಾರಿಗಳು ನಿರೀಕ್ಷೆಯಿಂದ ನೋಡುತ್ತಾರೆ.</verse>
				<verse number="20">ಅವರು ನಿರೀಕ್ಷಿಸಿದ್ದರಿಂದ ವ್ಯಥೆಗೊಂಡರು; ಅವರು ಬಂದು ಸ್ಥಳಸೇರಿದರೂ ನಿರಾಶರಾದರು.</verse>
				<verse number="21">ಈಗ ನೀವು ಸಹ ಹಾಗೆಯೇ ನಿಸ್ಸಹಾಯಕರಾಗಿ ಇದ್ದೀರಿ; ಏಕೆಂದರೆ ನೀವು ನನ್ನ ವಿಪತ್ತನ್ನು ಕಂಡು ಹಿಂಜರಿಯುತ್ತೀರಿ.</verse>
				<verse number="22">ನಾನು ನಿಮ್ಮನ್ನು, ‘ನನಗೆ ದಾನಮಾಡಿರಿ,’ ಎಂದು ಬಿನ್ನವಿಸಿದೆನೋ? ‘ನಿಮ್ಮ ಆಸ್ತಿಯಿಂದ ನನಗಾಗಿ ಈಡು ಕೊಡಿರಿ,’ ಎಂದೆನೋ?</verse>
				<verse number="23">‘ಶತ್ರುವಿನ ಕೈಯಿಂದ ನನ್ನನ್ನು ತಪ್ಪಿಸಿರಿ,’ ಎಂದೂ, ‘ಬಲಾತ್ಕಾರಿಗಳ ಕೈಗಳಿಂದ ನನ್ನನ್ನು ವಿಮೋಚಿಸಿರಿ,’ ಎಂದೂ ನಾನು ಕೇಳಿದೆನೋ?</verse>
				<verse number="24">“ನನಗೆ ಬೋಧಿಸಿರಿ, ನಾನು ಮೌನವಾಗಿರುವೆನು; ನಾನು ಮಾಡಿದ ತಪ್ಪನ್ನು ನನಗೆ ತಿಳಿಸಿರಿ.</verse>
				<verse number="25">ಯಥಾರ್ಥ ಮಾತುಗಳು ಎಷ್ಟೋ ನೋವನ್ನು ತರುತ್ತವೆ! ಆದರೆ ನಿಮ್ಮ ತರ್ಕವು ರುಜುಪಡಿಸುವುದೇನು?</verse>
				<verse number="26">ನಾನು ಹೇಳಿದ ಮಾತುಗಳನ್ನು ತಿದ್ದಬೇಕೆನ್ನುವಿರೋ? ಬೇಸರದ ನನ್ನ ಮಾತುಗಳು ನಿಮಗೆ ಗಾಳಿಮಾತುಗಳೋ?</verse>
				<verse number="27">ತಂದೆಯಿಲ್ಲದವರಿಗಾಗಿ ಚೀಟು ಹಾಕುತ್ತೀರಿ, ನಿಮ್ಮ ಸ್ನೇಹಿತನನ್ನು ಮಾರಿಬಿಡುತ್ತೀರಿ.</verse>
				<verse number="28">“ಆದ್ದರಿಂದ ಈಗ ಸ್ವಲ್ಪ ದಯೆಯುಳ್ಳವರಾಗಿ ನನ್ನನ್ನು ದೃಷ್ಟಿಸಿರಿ; ನಾನು ನಿಮ್ಮೆದುರಿನಲ್ಲಿ ಸುಳ್ಳು ಹೇಳುವೆನೋ?</verse>
				<verse number="29">ಕರುಣೆ ತೋರಿಸಿರಿ, ಅನ್ಯಾಯವಾಗದಿರಲಿ; ಪುನಃ ಯೋಚಿಸಿರಿ, ನನ್ನ ಪ್ರಾಮಾಣಿಕತೆಯು ಪ್ರಶ್ನಿಸಲಾಗಿದೆ.</verse>
				<verse number="30">ನನ್ನ ನಾಲಿಗೆಯಲ್ಲಿ ದುಷ್ಟತನ ಇದೆಯೋ? ವಿಪತ್ತುಗಳ ವಿವೇಚನೆಯು ನನಗಿಲ್ಲವೋ?</verse>
			</chapter>
			<chapter number="7">
				<verse number="1">“ಮನುಷ್ಯರಿಗೆ ಭೂಮಿಯಲ್ಲಿ ಕಠಿಣ ದುಡಿತ ಇಲ್ಲವೇ? ಮಾನವನ ದಿನಗಳು ಜೀತದಾಳಿನ ದಿನಗಳ ಹಾಗಲ್ಲವೋ?</verse>
				<verse number="2">ಗುಲಾಮನು ಸಾಯಂಕಾಲದ ನೆರಳನ್ನು ಅಪೇಕ್ಷಿಸುವ ಪ್ರಕಾರವೂ, ನಾನು ಕೂಲಿಯವನು ತನ್ನ ಕೂಲಿಯನ್ನು ಕೋರುವ ಪ್ರಕಾರವೂ ಇದ್ದೇನೆ.</verse>
				<verse number="3">ನನಗೆ ನಿರರ್ಥಕತೆಯ ತಿಂಗಳುಗಳನ್ನು ನೀಡಲಾಗಿದೆ; ಬೇಸರಿಕೆಯ ರಾತ್ರಿಗಳು ನನಗೆ ನೇಮಕವಾಗಿವೆ.</verse>
				<verse number="4">ಮಲಗುವ ವೇಳೆಯಲ್ಲಿ, ‘ಯಾವಾಗ ಏಳುವೆನೋ?’ ಅಂದುಕೊಳ್ಳುವೆನು, ರಾತ್ರಿ ಬೆಳೆಯುತ್ತಾ ಹೋಗುತ್ತದೆ; ಉದಯದವರೆಗೂ ಹೊರಳಿ ಹೊರಳಿ ಸಾಕಾಗುತ್ತದೆ.</verse>
				<verse number="5">ನನ್ನ ದೇಹವು ಹುಳಹಕ್ಕಳೆಗಳನ್ನೂ ಧರಿಸಿಕೊಂಡಿದೆ; ನನ್ನ ಚರ್ಮವು ಕಜ್ಜಿಯಿಂದ ಬಿರಿದು ಹೋಗಿದೆ.</verse>
				<verse number="6">“ನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ; ದಿನಗಳು ನಿರೀಕ್ಷೆ ಇಲ್ಲದೆ ಮುಗಿಯುತ್ತವೆ.</verse>
				<verse number="7">ಓ ದೇವರೇ, ನನ್ನ ಜೀವವು ಕೇವಲ ಉಸಿರೆಂದು ನೆನಪುಮಾಡಿಕೊಳ್ಳಿರಿ. ನನ್ನ ಕಣ್ಣು ತಿರುಗಿ ಸಂತೋಷವನ್ನು ಕಾಣುವುದಿಲ್ಲ.</verse>
				<verse number="8">ನನ್ನನ್ನು ನೋಡುವವನ ಕಣ್ಣು, ಇನ್ನು ಮೇಲೆ ನನ್ನನ್ನು ನೋಡದು; ನೀವು ನನ್ನನ್ನು ನೋಡಿದರೂ, ನಾನು ಬದುಕಿರುವುದಿಲ್ಲ.</verse>
				<verse number="9">ಮೋಡವು ಕರಗಿ ಹೋಗುವ ಹಾಗೆಯೇ, ಪಾತಾಳಕ್ಕೆ ಇಳಿದವನು ಹಿಂತಿರುಗಿ ಬರಲಾರನು.</verse>
				<verse number="10">ಇನ್ನು ಅವನು ತನ್ನ ಮನೆಗೆ ತಿರುಗಿಕೊಳ್ಳುವುದಿಲ್ಲ; ಅವನ ಸ್ಥಳವು ಇನ್ನು ಅವನ ಗುರುತನ್ನು ಅರಿಯದು.</verse>
				<verse number="11">“ಆದ್ದರಿಂದ ನಾನು ನನ್ನ ಬಾಯಿ ಮುಚ್ಚುವುದಿಲ್ಲ; ಆತ್ಮವೇದನೆಯಿಂದ ಮಾತಾಡುವೆನು, ನನ್ನ ಆತ್ಮದ ಕಹಿಯಲ್ಲಿ ನಾನು ವಾದಿಸುವೆನು.</verse>
				<verse number="12">ನೀವು ನನಗೆ ಕಾವಲಿಡುವುದಕ್ಕೆ ನಾನೇನು ಸಮುದ್ರವೋ? ಇಲ್ಲವೆ ತಿಮಿಂಗಿಲವೋ?</verse>
				<verse number="13">ನನ್ನ ಹಾಸಿಗೆಯು ನನ್ನನ್ನು ಸಂತೈಸುವುದು; ನನ್ನ ಮಂಚವು ನನ್ನ ಚಿಂತೆಯನ್ನು ಶಮನ ಮಾಡಲಿ ಎಂದುಕೊಳ್ಳುವಾಗ,</verse>
				<verse number="14">ನೀವು ಸ್ವಪ್ನಗಳಿಂದ ನನ್ನನ್ನು ಹೆದರಿಸುತ್ತೀರಿ; ದರ್ಶನಗಳಿಂದ ನನ್ನನ್ನು ಭಯಪಡಿಸುತ್ತೀರಿ.</verse>
				<verse number="15">ಆದ್ದರಿಂದ ನನ್ನ ದೇಹದಲ್ಲಿ ಸಂಕಟಪಡುವುದಕ್ಕಿಂತಲೂ ಉಸಿರುಕಟ್ಟಿ, ನಾನು ನನ್ನ ಪ್ರಾಣಬಿಡುವುದು ಲೇಸು.</verse>
				<verse number="16">ನಾನು ನನ್ನ ಜೀವನವನ್ನು ದ್ವೇಷಿಸುತ್ತೇನೆ; ನಿರಂತರ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟುಬಿಡಿರಿ; ನನ್ನ ಬಾಳಿನ ದಿನಗಳಿಗೆ ಅರ್ಥವಿಲ್ಲ.</verse>
				<verse number="17">“ದೇವರೇ, ಮಾನವನು ಎಷ್ಟರವನು? ನೀವು ಮಾನವನಿಗೆ ಬಹು ಗೌರವ ಕೊಡುತ್ತೀರಿ, ಅವನ ಕಡೆಗೆ ಗಮನಹರಿಸುತ್ತೀರಿ.</verse>
				<verse number="18">ಮನುಷ್ಯನನ್ನು ಪ್ರತಿ ಉದಯದಲ್ಲಿ ವಿಚಾರಿಸುತ್ತೀರಿ, ನೀವು ಕ್ಷಣಕ್ಷಣಕ್ಕೆ ಅವನನ್ನು ಪರೀಕ್ಷಿಸುವುದೇಕೆ?</verse>
				<verse number="19">ನೀವು ನನ್ನ ಕಡೆಯಿಂದ ದೃಷ್ಟಿಯನ್ನು ತೊಲಗಿಸುವುದಿಲ್ಲವೋ? ನಾನು ಒಂದು ಕ್ಷಣ ಉಗುಳು ನುಂಗುವುದಕ್ಕೂ ನನ್ನನ್ನು ಬಿಡುವುದಿಲ್ಲ?</verse>
				<verse number="20">ಮನುಷ್ಯರನ್ನು ಕಾಯುವವರೇ, ನಾನು ಪಾಪಮಾಡಿದ್ದರೆ, ನಾವು ಮಾಡುವ ಪ್ರತಿಯೊಂದನ್ನೂ ನೋಡುವವರೇ, ನಾನು ನಿಮಗೆ ಏನು ಮಾಡಿದೆ? ನಾನು ನಿಮಗೆ ಭಾರವಾಗಿದ್ದೇನೋ? ನನ್ನನ್ನು ನಿಮ್ಮ ಗುರಿಯಾಗಿ ಇಟ್ಟುಕೊಳ್ಳುವುದು ಏಕೆ?</verse>
				<verse number="21">ನೀವು ನನ್ನ ಅಪರಾಧವನ್ನು ಪರಿಹರಿಸಬಾರದೇ? ನನ್ನ ಪಾಪವನ್ನು ಕ್ಷಮಿಸಬಾರದೇ? ನಾನು ಬೇಗ ಮಣ್ಣಿಗೆ ಸೇರಿಬಿಡುವೆನು; ನೀವು ನನ್ನನ್ನು ಹುಡುಕಿದರೆ ನಾನು ಇರುವುದಿಲ್ಲ.”</verse>
			</chapter>
			<chapter number="8">
				<verse number="1">ಆಗ, ಶೂಹ್ಯನಾದ ಬಿಲ್ದದನು ಈ ಪ್ರಕಾರ ಉತ್ತರಕೊಟ್ಟನು:</verse>
				<verse number="2">“ನೀನು ಎಷ್ಟರವರೆಗೆ ಇವುಗಳನ್ನು ನುಡಿಯುತ್ತಿರುವೆ? ನೀನು ಬಿರುಗಾಳಿಯಂಥ ಮಾತುಗಳನ್ನಾಡುತ್ತಿರುವೆ.</verse>
				<verse number="3">ದೇವರು ತೀರ್ಪಿಗೆ ವಿರುದ್ಧವಾದದ್ದನ್ನು ಮಾಡುತ್ತಾರೋ? ಸರ್ವಶಕ್ತರು ನೀತಿಗೆ ವಿರುದ್ಧವಾದದ್ದನ್ನು ಮಾಡುವರೋ?</verse>
				<verse number="4">ನಿನ್ನ ಮಕ್ಕಳು ದೇವರಿಗೆ ವಿರೋಧವಾಗಿ ಪಾಪಮಾಡಿದ್ದರೆ, ದೇವರು ಅವರ ಪಾಪಕ್ಕಾಗಿ ಅವರನ್ನು ದಂಡಿಸುವರು.</verse>
				<verse number="5">ಆದರೆ ನೀನೇ ದೇವರನ್ನು ಜಾಗ್ರತೆಯಾಗಿ ಹುಡುಕಿ, ಸರ್ವಶಕ್ತರಿಗೆ ಬಿನ್ನಹ ಮಾಡು.</verse>
				<verse number="6">ನೀನು ಶುದ್ಧನೂ, ಯಥಾರ್ಥನೂ ಆಗಿದ್ದರೆ, ನಿಶ್ಚಯವಾಗಿ ಈಗಲೇ ದೇವರು ನಿನಗೋಸ್ಕರ ಎಚ್ಚೆತ್ತು, ನಿನ್ನ ನೀತಿಯ ನಿವಾಸವನ್ನು ಸಮೃದ್ಧಿಗೊಳಿಸುವರು.</verse>
				<verse number="7">ನಿನ್ನ ಆರಂಭವು ಅಲ್ಪವಾಗಿದ್ದರೂ, ನಿನ್ನ ಅಂತ್ಯವು ಬಹಳವಾಗಿ ವೃದ್ಧಿ ಹೊಂದುವುದು.</verse>
				<verse number="8">“ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಲಿತಿದ್ದನ್ನು ಕಂಡುಕೊಳ್ಳುವುದಕ್ಕೆ ಸಿದ್ಧನಾಗು.</verse>
				<verse number="9">ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯದವರೂ ಆಗಿದ್ದೇವೆ; ಏಕೆಂದರೆ ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿನಂತಿವೆ.</verse>
				<verse number="10">ಪೂರ್ವಿಕರು ನಿನಗೆ ಬೋಧಿಸಿ ಬುದ್ಧಿ ಹೇಳಲಿಲ್ಲವೋ? ಅವರು ತಮ್ಮ ತಿಳುವಳಿಕೆಯನ್ನು ಹೊರತರಲಿಲ್ಲವೋ?</verse>
				<verse number="11">ಕೆಸರಿಲ್ಲದೆ ಆಪು ಹುಲ್ಲು ಬೆಳೆಯುವುದೋ? ನೀರಿಲ್ಲದೆ ಜಂಬು ಹುಲ್ಲು ಮೊಳೆಯುವುದೋ?</verse>
				<verse number="12">ಅದು ಹಸುರಾಗಿ ಇನ್ನೂ ಕೊಯ್ಯದೆ ಇದ್ದಾಗಲೂ, ಎಲ್ಲಾ ಹುಲ್ಲಿಗಿಂತಲೂ ಅದು ಮೊದಲು ಒಣಗಿಹೋಗುವುದು.</verse>
				<verse number="13">ದೇವರನ್ನು ಮರೆಯುವವರೆಲ್ಲರ ದಾರಿ ಹಾಗೆಯೇ; ಭಕ್ತಿಹೀನರ ನಿರೀಕ್ಷೆಯು ನಾಶವಾಗುವುದು.</verse>
				<verse number="14">ಅಂಥವರ ಭರವಸೆಯು ಭಂಗವಾಗುವುದು; ಅವರ ಆಶ್ರಯವು ಜೇಡರ ಹುಳದ ಮನೆಯಂತಿರುವುದು.</verse>
				<verse number="15">ಅಂಥಾ ಮನೆ ಮೇಲೆ ಒರಗಿಕೊಂಡರೆ, ಅದು ನಿಲ್ಲದು; ಅದನ್ನು ಬಿಗಿಹಿಡಿದರೆ, ಅದು ತಡೆಯಲಾರದು.</verse>
				<verse number="16">ಸೂರ್ಯನ ಮುಂದೆ ಭಕ್ತಿಹೀನರು ಹಸುರು ಬಳ್ಳಿಯಂತೆ ಇದ್ದಾರೆ; ಆ ಬಳ್ಳಿಯು ತೋಟದಲ್ಲೆಲ್ಲಾ ಹಬ್ಬುತ್ತಿದೆ.</verse>
				<verse number="17">ಅವರ ಬೇರುಗಳು ಬಂಡೆಗಳ ರಾಶಿಯ ಮೇಲೆ ಸುತ್ತಿ, ಕಲ್ಲುಗಳ ನಡುವೆ ನುಗ್ಗುತ್ತವೆ.</verse>
				<verse number="18">ಭಕ್ತಿಹೀನನನ್ನು ಅವನ ಸ್ಥಳದಿಂದ ಕಿತ್ತುಹಾಕಿದರೆ, ‘ನಾನು ನಿನ್ನನ್ನು ಎಂದಿಗೂ ನೋಡಿಲ್ಲ,’ ಎಂದು ಆ ನೆಲವು ಅವನನ್ನು ಅಲ್ಲಗಳೆಯುವುದು.</verse>
				<verse number="19">ಹೀಗೆ ಭಕ್ತಿಹೀನನ ಜೀವವು ಒಣಗಿಹೋಗುವುದು; ಆದರೆ ಆ ಮಣ್ಣಿನ ನೆಲದಿಂದ ಬೇರೆ ಸಸಿಗಳು ಮೊಳೆಯುವುದು.</verse>
				<verse number="20">“ದೇವರು ನಿರ್ದೋಷಿಯನ್ನು ತಿರಸ್ಕರಿಸುವುದಿಲ್ಲ; ಕೆಡುಕರ ಕೈಗಳನ್ನು ದೇವರು ಬಲಪಡಿಸುವದಿಲ್ಲ.</verse>
				<verse number="21">ದೇವರು ನಿನ್ನ ಬಾಯನ್ನು ನಗೆಯಿಂದ ತುಂಬಿಸುವರು; ನಿನ್ನ ತುಟಿಗಳನ್ನು ಜಯ ಧ್ವನಿಯಿಂದಲೂ ತುಂಬಿಸುವರು.</verse>
				<verse number="22">ನಿನ್ನ ಶತ್ರುಗಳಿಗೆ ನಾಚಿಕೆಯಾಗುವುದು; ದುಷ್ಟರ ವಾಸಸ್ಥಳವು ಇಲ್ಲದೆ ಹೋಗುವುದು.”</verse>
			</chapter>
			<chapter number="9">
				<verse number="1">ಅದಕ್ಕೆ ಯೋಬನು ಉತ್ತರಿಸುತ್ತಾ ಇಂತೆಂದನು:</verse>
				<verse number="2">“ನಿಜಕ್ಕೂ, ಇದು ಸತ್ಯ ಎಂದು ಬಲ್ಲೆನು; ಆದರೆ ಮನುಷ್ಯರು ದೇವರ ಮುಂದೆ ತಮ್ಮ ಮುಗ್ಧತೆಯನ್ನು ಪ್ರಮಾಣಿಕರಿಸುವುದು ಹೇಗೆ?</verse>
				<verse number="3">ದೇವರ ಸಂಗಡ ವ್ಯಾಜ್ಯವಾಡಲು ಮನುಷ್ಯನು ಬಯಸಿದರೂ, ದೇವರ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರ ಕೊಡಲಾರನು.</verse>
				<verse number="4">ದೇವರ ಜ್ಞಾನವು ಆಳವಾದದ್ದು, ಶಕ್ತಿಯಲ್ಲಿ ದೇವರು ಪ್ರಬಲರೂ ಆಗಿದ್ದಾರೆ; ದೇವರ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?</verse>
				<verse number="5">ದೇವರು ಪರ್ವತಗಳನ್ನು ಅವುಗಳಿಗೆ ತಿಳಿಯದ ಹಾಗೆ ಸರಿಸುತ್ತಾರೆ; ತಮ್ಮ ಎದುರಿನಲ್ಲಿ ಅವುಗಳನ್ನು ತಿರುಗಿಸುತ್ತಾರೆ.</verse>
				<verse number="6">ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುತ್ತಾರೆ; ಅದರ ಸ್ತಂಭಗಳು ನಡುಗುತ್ತವೆ.</verse>
				<verse number="7">ದೇವರು ಸೂರ್ಯನಿಗೆ ಪ್ರಕಾಶಿಸದಂತೆ ಅಪ್ಪಣೆ ಕೊಟ್ಟರೆ, ಪ್ರಕಾಶಿಸುತ್ತಿರಲಿಲ್ಲ; ನಕ್ಷತ್ರಗಳಿಗೆ ಮುದ್ರೆ ಹಾಕಿದ್ದರೆ, ನಕ್ಷತ್ರವೂ ಮಿನುಗುತ್ತಿರಲಿಲ್ಲ.</verse>
				<verse number="8">ದೇವರೊಬ್ಬರೇ ಆಕಾಶಗಳನ್ನು ಹರಡಿಸುತ್ತಾರೆ; ದೇವರು ಸಮುದ್ರದ ತೆರೆಗಳ ಮೇಲೆ ನಡೆಯುತ್ತಾರೆ.</verse>
				<verse number="9">ಸಪ್ತರ್ಷಿಮಂಡಲವನ್ನೂ, ಮೃಗಶಿರವನ್ನೂ, ಕೃತ್ತಿಕೆಯನ್ನೂ ದಕ್ಷಿಣ ದಿಕ್ಕಿನ ನಕ್ಷತ್ರಗ್ರಹಗಳನ್ನೂ ನಿರ್ಮಿಸಿದವರು ದೇವರೇ.</verse>
				<verse number="10">ದೇವರು ಕಂಡು ಹಿಡಿಯಲಾರದಂಥ ಮಹತ್ಕಾರ್ಯಗಳನ್ನೂ, ಲೆಕ್ಕವಿಲ್ಲದಷ್ಟು ಅದ್ಭುತಗಳನ್ನೂ ಮಾಡುತ್ತಾರೆ.</verse>
				<verse number="11">ದೇವರು ನನ್ನ ಮುಂದೆ ಹಾದುಹೋದಾಗ, ನನಗೆ ಅವರು ಕಾಣುವುದಿಲ್ಲ; ದೇವರು ದಾಟಿ ಹೋಗುತ್ತಾರೆ; ಆದರೆ ನಾನು ಅವರನ್ನು ಗ್ರಹಿಸಿಕೊಳ್ಳುವುದಿಲ್ಲ.</verse>
				<verse number="12">ದೇವರು ತೆಗೆದುಕೊಂಡರೆ, ಅವರಿಗೆ ಅಡ್ಡಿ ಮಾಡುವವರು ಯಾರು? ದೇವರನ್ನು, ‘ನೀವು ಏನು ಮಾಡುತ್ತೀರಿ?’ ಎಂದು ಕೇಳುವವರ‍್ಯಾರು.</verse>
				<verse number="13">ದೇವರು ತಮ್ಮ ಬೇಸರವನ್ನು ವ್ಯಕ್ತಪಡಿಸುತ್ತಾರೆ; ರಹಾಬನ ಸಹಾಯಕರು ಸಹ ದೇವರ ಕಾಲಿಗೆ ಅಡ್ಡಬಿದ್ದರಲ್ಲಾ.</verse>
				<verse number="14">“ದೇವರೊಂದಿಗೆ ವಾದಿಸಲು ನಾನು ಅಶಕ್ತನು; ದೇವರಿಗೆ ತಕ್ಕ ಉತ್ತರ ಕೊಡಲು ನಾನು ಎಷ್ಟರವನು?</verse>
				<verse number="15">ನಾನು ನೀತಿವಂತನಾಗಿದ್ದರೂ ಉತ್ತರ ಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಕರುಣೆಗೋಸ್ಕರ ಮೊರೆಯಿಡುವೆನು.</verse>
				<verse number="16">ನಾನು ಕರೆಯಲು ದೇವರು ನನಗೆ ಉತ್ತರ ಕೊಟ್ಟರೂ, ನನ್ನ ವಿಜ್ಞಾಪನೆಗೆ ದೇವರು ಕಿವಿಗೊಡುವರೆಂದು ನಾನು ನಂಬುತ್ತಿರಲಿಲ್ಲ.</verse>
				<verse number="17">ಏಕೆಂದರೆ ದೇವರು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾರೆ; ನನ್ನ ಗಾಯಗಳನ್ನು ಕಾರಣವಿಲ್ಲದೆ ಹೆಚ್ಚಿಸುತ್ತಾರೆ.</verse>
				<verse number="18">ನಾನು ಉಸಿರಾಡಲು ಕಷ್ಟಪಡುತ್ತಿದ್ದೇನೆ, ದೇವರು ಕಹಿಯಾದವುಗಳಿಂದ ನನ್ನನ್ನು ತುಂಬಿಸುತ್ತಾರೆ.</verse>
				<verse number="19">ಶಕ್ತಿಯ ವಿಷಯದಲ್ಲಿ ಹೇಳಬೇಕಾದರೆ, ಇಗೋ ದೇವರು ಬಲಶಾಲಿ! ನ್ಯಾಯದ ವಿಷಯದಲ್ಲಿ ವಾದಿಸಬೇಕಾದರೆ, ದೇವರಿಗೆ ಸವಾಲು ಹಾಕುವವರು ಯಾರು?</verse>
				<verse number="20">ನಾನು ನೀತಿವಂತನಾಗಿದ್ದರೂ, ನನ್ನ ಸ್ವಂತ ಬಾಯೇ ನನ್ನನ್ನು ಖಂಡಿಸುತ್ತದೆ; ನಾನು ನಿರ್ದೋಷಿಯಾಗಿದ್ದರೂ, ದೇವರು ನನ್ನನ್ನು ಅಪರಾಧಿ ಎಂದು ನಿರೂಪಿಸುವರು.</verse>
				<verse number="21">“ನಾನು ನಿರ್ದೋಷಿಯೇ ಹೌದು, ನನ್ನ ಬಗ್ಗೆ ನನಗೆ ಚಿಂತೆ ಇಲ್ಲ; ನನ್ನ ಬಾಳನ್ನೇ ತಿರಸ್ಕಾರ ಮಾಡುತ್ತೇನೆ.</verse>
				<verse number="22">ಇದೆಲ್ಲಾ ಒಂದೇ ವಿಷಯ; ಆದ್ದರಿಂದ ನಾನು ಇದನ್ನು ಹೇಳುತ್ತೇನೆ: ‘ನಿರ್ದೋಷಿಯನ್ನೂ, ಕೆಟ್ಟವನನ್ನೂ ದೇವರು ದಂಡಿಸುತ್ತಾರೆ.’</verse>
				<verse number="23">ವಿಪತ್ತು ಅಕಸ್ಮಾತ್ತಾಗಿ ಮರಣವನ್ನು ತಂದರೆ, ನಿರಪರಾಧಿಯ ಬುದ್ಧಿಹೀನತೆಗೆ ದೇವರು ನಗುವರು.</verse>
				<verse number="24">ಲೋಕವು ಕೆಟ್ಟವರ ಕೈವಶವಾಗಿದೆ; ನ್ಯಾಯಾಧಿಪತಿಗಳ ಮುಖಕ್ಕೆ ಮುಸುಕುಹಾಕಲಾಗಿದೆ; ಇದನ್ನು ಅನುಮತಿಸಿದವರು ದೇವರಲ್ಲದೆ ಮತ್ತೆ ಯಾರು?</verse>
				<verse number="25">“ಆದರೆ ನನ್ನ ದಿನಗಳು ಅಂಚೆಯವನಿಗಿಂತಲೂ ತ್ವರೆಯಾಗಿವೆ; ಆನಂದವನ್ನೂ ನೋಡದೆ ದಿನಗಳು ಓಡಿಹೋಗುತ್ತವೆ.</verse>
				<verse number="26">ಆಪಿನ ದೋಣಿಗಳು ದಾಟಿ ಹೋಗುವಂತೆಯೂ, ಹದ್ದು ತನ್ನ ಬೇಟೆಯ ಮೇಲೆ ಎರಗುವಂತೆಯೂ ದಿನಗಳು ವೇಗವಾಗಿ ಗತಿಸಿಹೋಗುತ್ತವೆ.</verse>
				<verse number="27">‘ನಾನು ನನ್ನ ದೂರುಗಳನ್ನು ಮರೆತು, ನನ್ನ ಭಾರವನ್ನು ಬಿಟ್ಟು, ಆದರಣೆ ಹೊಂದುವೆನು,’ ಎಂದು ತೀರ್ಮಾನಿಸಿಕೊಂಡರೆ,</verse>
				<verse number="28">ನನಗಾದ ವ್ಯಥೆಗಳಿಗೆಲ್ಲಾ ನಾನು ಇನ್ನೂ ಹೆದರುತ್ತಿದ್ದೇನೆ; ದೇವರು ನನ್ನನ್ನು ನಿರಪರಾಧಿ ಎಂದು ಎಣಿಸುವುದಿಲ್ಲವೆಂದು ಸಹ ನನಗೆ ಗೊತ್ತಿದೆ.</verse>
				<verse number="29">ನಾನು ಈಗಾಗಲೇ ಅಪರಾಧಿ ಎಂದು ನಿರ್ಣಯವಾಗಿರುವಾಗ, ನಾನು ಏಕೆ ವ್ಯರ್ಥವಾಗಿ ಹೋರಾಡಬೇಕು?</verse>
				<verse number="30">ನಾನು ಹಿಮದ ನೀರಿನಲ್ಲಿ ಸ್ನಾನಮಾಡಿ, ಸಾಬೂನಿನಿಂದ ನನ್ನ ಕೈಗಳನ್ನು ತೊಳೆದುಕೊಂಡರೂ,</verse>
				<verse number="31">ದೇವರು ನನ್ನನ್ನು ಕುಣಿಯಲ್ಲಿ ಮುಳುಗಿಸಿ ಬಿಡುವರು; ನನ್ನ ಸ್ವಂತ ವಸ್ತ್ರಗಳೇ ನನ್ನನ್ನು ಅಸಹ್ಯಪಡಬೇಕಾಗುವುದು.</verse>
				<verse number="32">“ದೇವರು ನನ್ನಂಥ ಕೇವಲ ಮನುಷ್ಯನಲ್ಲ, ನಾನು ದೇವರೊಂದಿಗೆ ವಾದಿಸುವುದು ಹೇಗೆ? ನಾವಿಬ್ಬರೂ ನ್ಯಾಯಾಲಯದ ಮುಂದೆ ಕೂಡಿ ವಾದಿಸುವುದು ಹೇಗೆ?</verse>
				<verse number="33">ನಮ್ಮಿಬ್ಬರನ್ನು ಒಟ್ಟು ಸೇರಿಸುವ ಮಧ್ಯಸ್ಥ ಒಂದು ವೇಳೆ ನಮ್ಮ ನಡುವೆ ಇದ್ದಿದ್ದರೆ,</verse>
				<verse number="34">ದೇವರ ಶಿಕ್ಷೆಯಕೋಲನ್ನು ನನ್ನ ಮೇಲಿನಿಂದ ತೊಲಗಿಸುವ ಒಬ್ಬ ಮಧ್ಯಸ್ಥ ಇದ್ದಿದ್ದರೆ, ದೇವರ ಭೀತಿಗೆ ನಾನು ಎಂದಿಗೂ ಹೆದರದೆ ಇರುತ್ತಿದ್ದೆ.</verse>
				<verse number="35">ಆಗ ನಾನು ದೇವರೊಂದಿಗೆ ಭಯಪಡದೆ ಮಾತನಾಡುತ್ತಿದ್ದೆ; ನನ್ನ ಸ್ವಂತ ಶಕ್ತಿಯಿಂದ ಈಗ ನಾನು ಅದನ್ನೆಲ್ಲಾ ನನಗೆ ಮಾಡಲು ಸಾಧ್ಯವಿಲ್ಲ.</verse>
			</chapter>
			<chapter number="10">
				<verse number="1">“ನನ್ನ ಜೀವನವೇ ನನಗೆ ಬೇಸರವಾಗಿದೆ; ನನ್ನ ದೂರುಗಳನ್ನು ಮನಬಿಚ್ಚಿ ನುಡಿಯುವೆನು; ನನ್ನ ಪ್ರಾಣದ ಕಹಿಯಿಂದ ಮಾತನಾಡುವೆನು.</verse>
				<verse number="2">ನಾನು ದೇವರಿಗೆ ಹೀಗೆ ಹೇಳುತ್ತೇನೆ: ನನ್ನನ್ನು ಅಪರಾಧಿ ಎಂದು ನಿರ್ಣಯಿಸಬೇಡಿರಿ. ನನ್ನ ಮೇಲೆ ನಿಮಗಿರುವ ಆಪಾದನೆಗಳನ್ನು ನನಗೆ ತಿಳಿಸಿರಿ.</verse>
				<verse number="3">ದೇವರೇ, ನಿಮ್ಮ ಕೈಕೃತಿಯಾಗಿರುವ ನನ್ನನ್ನು ಜಜ್ಜುವುದೂ ನಿಮಗೆ ಮೆಚ್ಚಿಕೆಯೋ? ನೀವು ನನ್ನನ್ನು ಅಲಕ್ಷ್ಯ ಮಾಡುವಿರೋ? ನೀವು ದುಷ್ಟರ ಯೋಜನೆಯನ್ನು ಮೆಚ್ಚುವಿರೋ?</verse>
				<verse number="4">ನಿಮಗೆ ಮಾಂಸದ ಕಣ್ಣುಗಳುಂಟೋ? ಮನುಷ್ಯರು ನೋಡುವಂತೆಯೇ ನೀವೂ ನೋಡುತ್ತೀರೋ?</verse>
				<verse number="5">ದೇವರೇ, ನಿಮ್ಮ ದಿನಗಳು ಮನುಷ್ಯರ ದಿನಗಳ ಹಾಗಿವೆಯೋ? ನಿಮ್ಮ ವರ್ಷಗಳು ಮನುಷ್ಯರ ವರ್ಷಗಳಂತಿವೆಯೋ?</verse>
				<verse number="6">ಏಕೆಂದರೆ ನನ್ನ ತಪ್ಪುಗಳನ್ನು ಹುಡುಕುವ ನಿಮಗೆ ಗೊತ್ತಿದೆ; ಹೌದು, ನನ್ನ ಪಾಪವನ್ನು ವಿಚಾರಿಸುವ ನಿಮಗೇ ಗೊತ್ತಿದೆ.</verse>
				<verse number="7">ನಾನು ಅಪರಾಧಿಯಲ್ಲವೆಂದು ನಿಮಗೆ ಗೊತ್ತಿದೆ, ನಿಮ್ಮ ಕೈಯಿಂದ ತಪ್ಪಿಸುವವರು ಯಾರೂ ಇಲ್ಲವೆಂದೂ ನಿಮಗೆ ಗೊತ್ತಿದೆಯಲ್ಲವೇ?</verse>
				<verse number="8">“ನಿಮ್ಮ ಕೈಗಳು ನನ್ನನ್ನು ನಿರ್ಮಿಸಿದೆ, ನೀವೇ ನನ್ನನ್ನು ರೂಪಿಸಿದವರು; ಈಗ ನೀವೇ ನನಗೆ ವಿಮುಖರಾಗಿ ನನ್ನನ್ನು ತೆಗೆದುಹಾಕುವಿರಾ?</verse>
				<verse number="9">ನೀವು ಕುಂಬಾರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀರಿ ಎಂದು ಜ್ಞಾಪಕಮಾಡಿಕೊಳ್ಳಿರಿ. ಈಗ ನೀವೇ ನನ್ನನ್ನು ಮಣ್ಣಿಗೆ ಸೇರಿಸುವಿರೋ?</verse>
				<verse number="10">ನೀವು ಹಾಲಿನಂತೆ ನನ್ನನ್ನು ಸುರಿಸಲಿಲ್ಲವೋ? ಮೊಸರಿನ ಹಾಗೆ ಹೆಪ್ಪುಗಟ್ಟಿಸಲಿಲ್ಲವೋ?</verse>
				<verse number="11">ದೇವರೇ, ನೀವು ಚರ್ಮವನ್ನೂ, ಮಾಂಸವನ್ನೂ ನನಗೆ ಹೊದಿಸಿದ್ದೀರಿ; ನೀವು ಎಲುಬು ನರಗಳಿಂದಲೂ ನನ್ನನ್ನು ಹೆಣೆದಿರುವಿರಿ.</verse>
				<verse number="12">ದೇವರೇ, ನೀವು ನನಗೆ ಜೀವ ಕೊಟ್ಟಿರಿ, ನೀವು ನನಗೆ ಒಡಂಬಡಿಕೆಯ ಪ್ರೀತಿಯನ್ನೂ ತೋರಿಸಿದ್ದೀರಿ; ನಿಮ್ಮ ಪರಾಮರಿಕೆಯಿಂದ ನನ್ನ ಆತ್ಮವನ್ನು ಕಾಪಾಡಿದ್ದೀರಿ.</verse>
				<verse number="13">“ಆದರೂ ನೀವು ಇವುಗಳನ್ನು ನಿಮ್ಮ ಹೃದಯದಲ್ಲಿ ಮರೆಮಾಡಿಕೊಂಡಿದ್ದೀರಿ; ಇದು ನಿಮ್ಮ ಉದ್ದೇಶ ಎಂದು ನನಗೆ ಗೊತ್ತಿದೆ:</verse>
				<verse number="14">ಅದೇನೆಂದರೆ, ನಾನು ಒಂದು ವೇಳೆ ಪಾಪಮಾಡಿದರೆ, ನೀವು ಅದನ್ನು ಕಂಡುಹಿಡಿದು ನನ್ನ ಅಪರಾಧಕ್ಕಾಗಿ ನನ್ನನ್ನು ದಂಡಿಸದೇ ಬಿಡುವುದಿಲ್ಲ ಎಂಬುದೇ.</verse>
				<verse number="15">ನಾನು ಅಪರಾಧಿಯಾಗಿದ್ದರೆ ನನಗೆ ಕಷ್ಟ! ನಾನು ನೀತಿವಂತನಾಗಿದ್ದರೂ ನನ್ನ ತಲೆ ಎತ್ತಲಾರೆ; ಏಕೆಂದರೆ, ನಾಚಿಕೆಯಿಂದ ನಾನು ತುಂಬಿದ್ದೇನೆ, ನಾನು ಬಾಧೆಯಿಂದ ಮುಳುಗಿಹೋಗಿದ್ದೇನೆ.</verse>
				<verse number="16">ನಾನು ತಲೆಯೆತ್ತಿದರೆ, ಸಿಂಹದಂತೆ ನನ್ನನ್ನು ಬೇಟೆಯಾಡುತ್ತೀರಿ; ನನ್ನ ವಿರುದ್ಧ ನಿಮ್ಮ ಅದ್ಭುತ ಶಕ್ತಿಯನ್ನು ಪ್ರದರ್ಶಿಸುವಿರಿ.</verse>
				<verse number="17">ಹೊಸ ಸಾಕ್ಷಿಗಳನ್ನು ನನಗೆ ವಿರೋಧವಾಗಿ ತರುತ್ತೀರಿ; ನನ್ನ ಮೇಲೆ ಅಧಿಕಬೇಸರಗೊಳ್ಳುತ್ತೀರಿ; ಅಲೆ ಅಲೆಯಾಗಿ ನಿಮ್ಮ ಸೈನ್ಯವು ನನಗೆ ಎದುರಾಗಿವೆ.</verse>
				<verse number="18">“ಹಾಗಾದರೆ ಏಕೆ ನನ್ನನ್ನು ಗರ್ಭದಿಂದ ಹೊರಡ ಮಾಡಿದ್ದೀರಿ? ಯಾರೂ ನನ್ನನ್ನು ನೋಡದ ಹಾಗೆ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.</verse>
				<verse number="19">ನಾನು ಬದುಕಿರದೇ, ಗರ್ಭದೊಳಗಿಂದಲೇ ಸಮಾಧಿ ಸೇರುತ್ತಿದ್ದೆನು.</verse>
				<verse number="20">ನನ್ನ ಅಲ್ಪದಿನಗಳು ಮುಗಿದಿಲ್ಲವೋ? ಸ್ವಲ್ಪ ಹೊತ್ತು ಆನಂದಿಸಲು ನನ್ನನ್ನು ಬಿಟ್ಟುಬಿಡಿರಿ.</verse>
				<verse number="21">ನಾನು ಹಿಂದಿರುಗಲಾಗದ ಮಬ್ಬಾಗಿರುವ ಕತ್ತಲೆಯ ದೇಶಕ್ಕೆ ಸೇರಲಿರುವೆನು.</verse>
				<verse number="22">ಆ ದೇಶದಲ್ಲಿ ಕಾರ್ಗತ್ತಲೂ, ಗಾಢಾಂಧಕಾರವೂ ಮರಣದ ತುಂಬಿರುವುದು. ಕ್ರಮವಿಲ್ಲದ ಆ ದೇಶದಲ್ಲಿ ಬೆಳಕೂ ಕತ್ತಲೆಯೇ.”</verse>
			</chapter>
			<chapter number="11">
				<verse number="1">ಆಗ ನಾಮಾಥ್ಯನಾದ ಚೋಫರನು ಹೀಗೆಂದನು:</verse>
				<verse number="2">“ಬಹಳ ಮಾತುಗಳಿಂದ ಉತ್ತರ ಕೊಡಬಾರದೋ? ಬಾಯಿ ಬಡುಕನು ನೀತಿವಂತನೆಂದು ಎನಿಸಿಕೊಳ್ಳುವನೋ?</verse>
				<verse number="3">ನಿನ್ನ ವ್ಯರ್ಥ ಮಾತಿಗೆ ಮನುಷ್ಯರು ಮೌನವಾಗಿರಬೇಕೋ? ನೀನು ಗೇಲಿ ಮಾಡುವಾಗ ಯಾವನೂ ನಿನ್ನನ್ನು ಖಂಡಿಸುವುದಿಲ್ಲವೋ?</verse>
				<verse number="4">ಏಕೆಂದರೆ ನೀನು, ‘ನನ್ನ ನಂಬಿಕೆ ತಪ್ಪಿಲ್ಲದ್ದು, ನಿಮ್ಮ ದೃಷ್ಟಿಯಲ್ಲಿ ನಾನು ಶುದ್ಧನಾಗಿದ್ದೇನೆ,’ ಎಂದು ದೇವರಿಗೆ ಹೇಳಿದ್ದೀ.</verse>
				<verse number="5">ಆಹಾ, ದೇವರು ಮಾತನಾಡಿ, ನಿನ್ನ ವಿರೋಧವಾಗಿ ತಮ್ಮ ತುಟಿಗಳನ್ನು ತೆರೆದು,</verse>
				<verse number="6">ಜ್ಞಾನದ ಮರ್ಮಗಳನ್ನು ನಿನಗೆ ತೋರಿಸಿದರೆ ಒಳ್ಳೆಯದು, ನಿಜ ಜ್ಞಾನಕ್ಕೆ ಎರಡು ಬದಿಗಳಿವೆ; ದೇವರು ನಿನ್ನ ಪಾಪಗಳನ್ನು ತಮ್ಮ ಲಕ್ಷ್ಯಕ್ಕೆ ತರಲಿಲ್ಲ ಎಂದು ತಿಳಿದುಕೋ.</verse>
				<verse number="7">“ನೀನು ದೇವರ ರಹಸ್ಯಗಳನ್ನು ಕಂಡುಕೊಳ್ಳುವಿಯಾ? ಸರ್ವಶಕ್ತರ ಮಿತಿಯನ್ನು ನಿನ್ನಿಂದ ಪರೀಕ್ಷಿಸಲಾದೀತೇ?</verse>
				<verse number="8">ಅದು ಆಕಾಶಕ್ಕಿಂತಲೂ ಎತ್ತರವಾಗಿದೆ; ಆಗ ನೀನೇನು ಮಾಡುವಿ? ಅದು ಪಾತಾಳಕ್ಕಿಂತಲೂ ಆಳವಾಗಿದೆ; ಆಗ ನೀನೇನು ತಿಳುಕೊಳ್ಳುವಿ?</verse>
				<verse number="9">ಅದರ ಅಳತೆ ಭೂಮಿಗಿಂತ ಉದ್ದವೂ, ಸಮುದ್ರಕ್ಕಿಂತ ಅಗಲವೂ ಆಗಿದೆ.</verse>
				<verse number="10">“ದೇವರು ಬಂದು ನಿನ್ನನ್ನು ಸೆರೆಮನೆಯಲ್ಲಿಟ್ಟರೂ, ನ್ಯಾಯವಿಚಾರಣೆಗೆ ಕರೆದರೂ, ದೇವರನ್ನು ತಡೆಯುವವರು ಯಾರು?</verse>
				<verse number="11">ಖಂಡಿತವಾಗಿ ದೇವರು ಮೋಸಗಾರರನ್ನು ಗುರುತಿಸುತ್ತಾರೆ; ದೇವರು ದುಷ್ಟತನವನ್ನು ನೋಡಿ ಅದನ್ನು ಗ್ರಹಿಸಿಕೊಳ್ಳದೆ ಇರುತ್ತಾರೋ?</verse>
				<verse number="12">ಒಂದು ಕಾಡುಕತ್ತೆ ಮರಿಗೆ ಹೇಗೆ ಮನುಷ್ಯನಾಗಲು ಸಾಧ್ಯವಿಲ್ಲವೋ, ಹಾಗೆಯೇ ದಡ್ಡ ಮನುಷ್ಯನು ಜ್ಞಾನಿಯಾಗಲು ಸಾಧ್ಯವಿಲ್ಲ.</verse>
				<verse number="13">“ಆದರೂ ನೀನು ನಿನ್ನ ಹೃದಯವನ್ನು ದೇವರಿಗೆ ಸಮರ್ಪಿಸಿ, ನಿನ್ನ ಕೈಗಳನ್ನು ದೇವರ ಕಡೆಗೆ ಚಾಚಿ,</verse>
				<verse number="14">ನಿನ್ನ ಕೈಯಲ್ಲಿರುವ ಪಾಪವನ್ನು ದೂರಮಾಡಿಬಿಟ್ಟು, ದುಷ್ಟತನವನ್ನು ನಿನ್ನ ಗುಡಾರಗಳಲ್ಲಿ ವಾಸಿಸಲು ಅನುಮತಿಸದಿದ್ದರೆ,</verse>
				<verse number="15">ನೀನು ದೋಷದಿಂದ ಬಿಡುಗಡೆಯಾಗಿ ನಿನ್ನ ಮುಖವನ್ನು ಎತ್ತುವಿ; ಹೌದು, ನೀನು ಸ್ಥಿರವಾಗಿದ್ದು, ಹೆದರದೆ ಇರುವಿ.</verse>
				<verse number="16">ಖಂಡಿತವಾಗಿ ನಿನ್ನ ಕಷ್ಟವನ್ನು ಮರೆತುಬಿಡುವಿ; ಹರಿದುಹೋದ ನೀರಿನ ಹಾಗೆ ಅದನ್ನು ಜ್ಞಾಪಕಮಾಡಿಕೊಳ್ಳುವಿ.</verse>
				<verse number="17">ನಿನ್ನ ಜೀವಮಾನವು ಮಧ್ಯಾಹ್ನಕ್ಕಿಂತ ಪ್ರಜ್ವಲಿಸುವುದು; ನಿನ್ನ ಕತ್ತಲೆಯು ಬೆಳಗಿನಂತೆ ಇರುವುದು.</verse>
				<verse number="18">ನೀನು ನಿರೀಕ್ಷೆ ಇದೆ ಎಂದು ಭರವಸೆಯಿಂದ ಇರುವಿ; ನೀನು ನಿನ್ನ ಬಗ್ಗೆ ಯೋಚಿಸಿ ಭರವಸೆಯಿಂದ ವಿಶ್ರಾಂತಿ ತೆಗೆದುಕೊಳ್ಳುವಿ.</verse>
				<verse number="19">ನೀನು ಮಲಗಿಕೊಂಡಾಗ ಯಾರೂ ನಿನ್ನನ್ನು ಹೆದರಿಸರು; ಅನೇಕರು ನಿನ್ನಿಂದ ಮೆಚ್ಚಿಕೆಯನ್ನು ಅಪೇಕ್ಷಿಸುವರು.</verse>
				<verse number="20">ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವುದಿಲ್ಲ; ಪ್ರಾಣಬಿಡಬೇಕೆಂಬುದೇ ಅವರ ನಿರೀಕ್ಷೆಯಾಗಿರುವುದು.”</verse>
			</chapter>
			<chapter number="12">
				<verse number="1">ಅದಕ್ಕೆ ಯೋಬನು ಹೀಗೆ ಉತ್ತರಕೊಟ್ಟನು:</verse>
				<verse number="2">“ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವುದು.</verse>
				<verse number="3">ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; ನಾನು ನಿಮಗಿಂತ ಕಡಿಮೆ ಇಲ್ಲ; ಇಂಥಾ ವಿಷಯಗಳನ್ನು ತಿಳಿಯದಿರುವವನು ಯಾರು?</verse>
				<verse number="4">“ನಾನು ನೀತಿವಂತನೂ, ನಿರ್ದೋಷಿಯಾದರೂ ಗೆಳೆಯರ ಗೇಲಿ ಪರಿಹಾಸ್ಯಕ್ಕೆ ಗುರಿಯಾದೆನು; ನಾನು ದೇವರಿಗೆ ಪ್ರಾರ್ಥಿಸಿದೆ; ದೇವರು ನನಗೆ ಉತ್ತರಕೊಟ್ಟರು;</verse>
				<verse number="5">ಸುಖಜೀವಿಗಳಾಗಿರುವ ಜನರು ತೊಂದರೆಯಲ್ಲಿ ಇರುವವರನ್ನು ಅಪಹಾಸ್ಯ ಮಾಡುತ್ತಾರೆ, ಎಡವಿ ಬೀಳುವ ಜನರಿಗೆ ಕಾದಿದೆ ಆಪತ್ತು.</verse>
				<verse number="6">ಕಳ್ಳರ ಗುಡಾರಗಳು ವೃದ್ಧಿಯಾಗಿವೆ; ದೇವರನ್ನು ಕೆರಳಿಸುವವರು ನಿಶ್ಚಿಂತರಾಗಿದ್ದಾರೆ; ದೇವರೇ ತಮ್ಮ ಕೈಯಲ್ಲಿ ಇರುವುದಾಗಿ ತಿಳಿಯುತ್ತಾರೆ.</verse>
				<verse number="7">“ಆದರೂ ಮೃಗಗಳನ್ನು ಕೇಳು, ಅವು ನಿನಗೆ ಬೋಧಿಸುವುವು; ಆಕಾಶದ ಪಕ್ಷಿಗಳನ್ನು ಕೇಳು, ಅವು ನಿನಗೆ ತಿಳಿಸುವುವು.</verse>
				<verse number="8">ಭೂಮಿಯ ಸಂಗಡ ಮಾತನಾಡು, ಅದು ನಿನಗೆ ಬೋಧಿಸುವುದು, ಸಮುದ್ರದ ಮೀನುಗಳು ನಿನಗೆ ವಿವರಿಸುವುವು.</verse>
				<verse number="9">ಯೆಹೋವ ದೇವರ ಕೈ ಇವುಗಳನ್ನೆಲ್ಲಾ ಮಾಡಿತೆಂದು ಇವುಗಳಲ್ಲಿ ತಿಳಿಯದಿರುವುದು ಯಾವುದು?</verse>
				<verse number="10">ದೇವರ ಕೈಯಲ್ಲಿ ಎಲ್ಲಾ ಜೀವಿಗಳ ಪ್ರಾಣವೂ ಎಲ್ಲಾ ಮನುಷ್ಯರ ಶ್ವಾಸವೂ ಇವೆ.</verse>
				<verse number="11">ಬಾಯಿಯು ಆಹಾರವನ್ನು ರುಚಿ ನೋಡುವಂತೆ ಕಿವಿಯು ನುಡಿಗಳನ್ನು ವಿವೇಚಿಸುವುದಿಲ್ಲವೇ?</verse>
				<verse number="12">ಮುದುಕರಲ್ಲಿ ಜ್ಞಾನವು ಇರುವುದಿಲ್ಲವೋ? ದೀರ್ಘಾಯುಷ್ಯರಲ್ಲಿ ತಿಳುವಳಿಕೆಯನ್ನು ತರುವುದಿಲ್ಲವೋ?</verse>
				<verse number="13">“ಜ್ಞಾನವೂ, ಶಕ್ತಿಯೂ ದೇವರಲ್ಲಿವೆ; ಸಮಾಲೋಚನೆಯೂ, ಗ್ರಹಿಕೆಯೂ ದೇವರವೇ.</verse>
				<verse number="14">ದೇವರು ಕೆಡವಿದ್ದನ್ನು ತಿರುಗಿ ಕಟ್ಟಲಾಗುವುದಿಲ್ಲ; ದೇವರು ಸೆರೆಯಲ್ಲಿ ಹಾಕುವ ಮನುಷ್ಯನನ್ನು ಯಾರೂ ಬಿಡಿಸಲಾಗುವುದಿಲ್ಲ.</verse>
				<verse number="15">ದೇವರು ಮಳೆಯನ್ನು ತಡೆಹಿಡಿಯುತ್ತಾರೆ, ಭೂಮಿ ಒಣಗುತ್ತದೆ; ದೇವರು ನೀರನ್ನು ಬಿಟ್ಟರೆ, ಭೂಮಿಯನ್ನು ಹಾಳುಮಾಡುತ್ತದೆ.</verse>
				<verse number="16">ಬಲವೂ, ಜ್ಞಾನವೂ ದೇವರಲ್ಲಿವೆ; ವಂಚಕ ಹಾಗು ವಂಚಿತ ದೇವರಿಗೆ ಒಳಪಟ್ಟವರು.</verse>
				<verse number="17">ದೇವರು ಸಲಹೆಗಾರರನ್ನು ಸೆರೆಹಿಡಿಯುತ್ತಾರೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾರೆ.</verse>
				<verse number="18">ದೇವರು ಅರಸರಿಂದ ಹಾಕಲಾದ ಬಂಧನಗಳನ್ನು ಬಿಚ್ಚಿ, ಅವರ ನಡುಗಳಿಗೆ ವಸ್ತ್ರವನ್ನು ಕಟ್ಟುತ್ತಾರೆ.</verse>
				<verse number="19">ದೇವರು ಯಾಜಕರನ್ನು ಅಧಿಕಾರದಿಂದ ತೆಗೆದುಹಾಕುತ್ತಾರೆ; ಪ್ರಧಾನರನ್ನು ಕೆಡವಿಬಿಡುತ್ತಾರೆ.</verse>
				<verse number="20">ದೇವರು ವಿಶ್ವಾಸಾರ್ಹ ಸಲಹೆಗಾರರನ್ನು ಮೌನಗೊಳಿಸುತ್ತಾರೆ; ವೃದ್ಧರ ವಿವೇಚನೆಯನ್ನು ತೆಗೆದುಬಿಡುತ್ತಾರೆ.</verse>
				<verse number="21">ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾರೆ; ಬಲಿಷ್ಠರ ಬಲವನ್ನು ಸಡಿಲಿಸುತ್ತಾರೆ.</verse>
				<verse number="22">ದೇವರು ಕತ್ತಲೆಯೊಳಗಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾರೆ, ಗಾಢಾಂಧಕಾರವನ್ನು ಪ್ರಕಾಶಗೊಳಿಸುತ್ತಾರೆ.</verse>
				<verse number="23">ದೇಶಗಳನ್ನು ಬೆಳೆಸುವುದೂ, ದಂಡಿಸುವುದೂ ದೇವರ ಕೈಯಲ್ಲಿದೆ; ದೇಶಗಳನ್ನು ವಿಸ್ತಾರಮಾಡುವುದೂ, ಚದರಿಸುವುದೂ ದೇವರ ಅಧಿಕಾರದಲ್ಲಿದೆ.</verse>
				<verse number="24">ದೇವರು ಭೂಮಿಯ ಮುಖ್ಯಸ್ಥರ ವಿವೇಚನೆಯನ್ನು ತೆಗೆದುಬಿಡುತ್ತಾರೆ; ಅಂಥವರು ಮಾರ್ಗವಿಲ್ಲದ ಅಲೆಯ ಮಾಡುವುದೂ ದೇವರಿಗೆ ಸಾಧ್ಯ.</verse>
				<verse number="25">ನಾಯಕರು ಬೆಳಕು ಇಲ್ಲದ ಕತ್ತಲೆಯಲ್ಲಿ ತಡಕಾಡುವಂತೆಯೂ ಅವರು ಮತ್ತೇರಿದವರಂತೆ ದಿಗ್ಭ್ರಮೆಗೊಳಿಸುವಂತೆಯೂ ಮಾಡಲು ದೇವರು ಶಕ್ತರು.</verse>
			</chapter>
			<chapter number="13">
				<verse number="1">“ಇಗೋ, ನನ್ನ ಕಣ್ಣು ಎಲ್ಲವನ್ನು ನೋಡಿದೆ; ನನ್ನ ಕಿವಿ ಕೇಳಿ ಅದನ್ನು ಗ್ರಹಿಸಿಕೊಂಡಿದೆ.</verse>
				<verse number="2">ನೀವು ತಿಳಿದುಕೊಳ್ಳುವ ಪ್ರಕಾರ ನಾನೂ ತಿಳಿದುಕೊಂಡಿದ್ದೇನೆ; ನಾನು ನಿಮಗಿಂತ ಕಡಿಮೆಯಾದವನಲ್ಲ.</verse>
				<verse number="3">ನಾನು ಸರ್ವಶಕ್ತರ ಸಂಗಡ ಖಂಡಿತವಾಗಿ ಮಾತನಾಡುವೆನು; ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು.</verse>
				<verse number="4">ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರು ವ್ಯರ್ಥ ವೈದ್ಯರೇ.</verse>
				<verse number="5">ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು; ಮೌನವೇ ನಿಮಗೆ ಜ್ಞಾನವು.</verse>
				<verse number="6">ಈಗ ನನ್ನ ವಾದವನ್ನು ಕೇಳಿಸಿಕೊಳ್ಳಿರಿ; ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ.</verse>
				<verse number="7">ದೇವರ ಪರವಾಗಿ ಮಾತಾಡುವ ನೀವು ಅನ್ಯಾಯದಿಂದ ಮಾತಾಡುವಿರೋ? ದೇವರಿಗೋಸ್ಕರ ಮಾತಾಡುವ ನೀವು ವಂಚನೆಯಿಂದ ಮಾತಾಡುವಿರೋ?</verse>
				<verse number="8">ನೀವು ದೇವರಿಗೆ ಪಕ್ಷಪಾತವನ್ನು ತೋರಿಸುವಿರೋ? ದೇವರ ಪರವಾಗಿ ನೀವು ವಾದಿಸುವಿರೋ?</verse>
				<verse number="9">ದೇವರು ನಿಮ್ಮನ್ನು ಶೋಧಿಸಿದರೆ, ಅದು ನಿಮಗೆ ಒಳ್ಳೇದೋ? ಒಬ್ಬ ಮನುಷ್ಯನು ಇನ್ನೊಬ್ಬನನ್ನು ವಂಚಿಸುವ ಪ್ರಕಾರ, ನೀವೂ ದೇವರನ್ನು ವಂಚಿಸುವಿರೋ?</verse>
				<verse number="10">ನೀವು ರಹಸ್ಯವಾಗಿ ಪಕ್ಷಪಾತಮಾಡಿದರೂ, ದೇವರು ನಿಶ್ಚಯವಾಗಿಯೂ ನಿಮ್ಮನ್ನು ಖಂಡಿಸುವರು.</verse>
				<verse number="11">ದೇವರ ವೈಭವವು ನಿಮ್ಮನ್ನು ಹೆದರಿಸುವುದಿಲ್ಲವೋ? ದೈವಭಯವು ನಿಮ್ಮ ಮೇಲೆ ಬೀಳುವುದಿಲ್ಲವೋ?</verse>
				<verse number="12">ನಿಮ್ಮ ನೀತಿವಚನಗಳು ಬೂದಿಯ ಗಾದೆಗಳು; ನಿಮ್ಮ ವಾದಗಳು ಬರೀ ಮಣ್ಣಿನ ಗೋಡೆಯೇ.</verse>
				<verse number="13">“ಸುಮ್ಮನಿರಿ, ನನ್ನನ್ನು ಮಾತನಾಡಲು ಬಿಡಿರಿ; ನನಗೇನಾದರೂ ಆಗಲಿ.</verse>
				<verse number="14">ನನ್ನ ಪ್ರಾಣವನ್ನು ಬಾಯಿಂದ ಕಚ್ಚಿಕೊಂಡಿರುವೆನು; ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು.</verse>
				<verse number="15">ದೇವರು ನನ್ನನ್ನು ಕೊಂದರೂ, ನಾನು ದೇವರ ಮೇಲೆ ನಿರೀಕ್ಷೆಯಿಂದಿರುವೆನು; ನಾನು ನಿಶ್ಚಯವಾಗಿ ನನ್ನ ನಡತೆಯ ಒಳ್ಳೆಯತನವನ್ನು ದೇವರ ಮುಂದೆ ಸ್ಥಾಪಿಸುವೆನು.</verse>
				<verse number="16">ಇದೇ ನನ್ನ ಬಿಡುಗಡೆಗೆ ಕಾರಣವಾಗಿರುವುದು; ಭಕ್ತಿಹೀನರು ದೇವರ ಮುಂದೆ ಬರಲು ಧೈರ್ಯಮಾಡುವುದಿಲ್ಲ.</verse>
				<verse number="17">ನನ್ನ ನುಡಿಗಳನ್ನು ಲಕ್ಷ್ಯವಿಟ್ಟು ಕೇಳಿರಿ ಮತ್ತು ನನ್ನ ದೃಢ ವಚನವು ನಿಮ್ಮ ಕಿವಿಗೆ ಬೀಳಲಿ.</verse>
				<verse number="18">ಇಗೋ, ನನ್ನ ನ್ಯಾಯವನ್ನು ಕ್ರಮಪಡಿಸಿದೆನು; ನಾನು ನೀತಿವಂತನೆಂದು ನಿರ್ಣಯ ಹೊಂದುವುದು ನನಗೆ ಗೊತ್ತೇ ಇದೆ.</verse>
				<verse number="19">ಯಾರಾದರೂ ನನ್ನ ವಿರುದ್ಧ ದೂರನ್ನು ತರಬಹುದೋ? ಹಾಗಿದ್ದರೆ ನಾನು ಮೌನವಾಗಿದ್ದು ಸತ್ತು ಹೋಗುವೆನು.</verse>
				<verse number="20">“ದೇವರೇ, ಈ ಎರಡು ಸಂಗತಿಗಳನ್ನು ಮಾತ್ರ ನನಗೆ ದಯಪಾಲಿಸಿರಿ; ಆಗ ನಿಮ್ಮಿಂದ ನಾನು ಅಡಗಿಕೊಳ್ಳುವುದಿಲ್ಲ:</verse>
				<verse number="21">ನಿಮ್ಮ ಕೈಯನ್ನು ನನ್ನಿಂದ ದೂರಮಾಡಿರಿ; ನಿಮ್ಮ ಭಯವು ನನ್ನನ್ನು ಹೆದರಿಸದಿರಲಿ.</verse>
				<verse number="22">ಆಮೇಲೆ ನೀವು ನನ್ನನ್ನು ಕರೆದರೆ, ನಾನು ಉತ್ತರಿಸುವೆನು; ಅಥವಾ ನಾನು ಮಾತಾಡಿದರೆ, ನೀವು ಉತ್ತರಕೊಡಿರಿ.</verse>
				<verse number="23">ನಾನು ಎಷ್ಟೋ ಅಕ್ರಮಗಳನ್ನೂ, ಪಾಪಗಳನ್ನೂ ಮಾಡಿದ್ದೇನೆ. ನನ್ನ ಅಪರಾಧವನ್ನೂ, ಪಾಪವನ್ನೂ ನನಗೆ ತೋರಿಸಿಕೊಡಿರಿ.</verse>
				<verse number="24">ಏಕೆ ನಿಮ್ಮ ಮುಖವನ್ನು ಮರೆಮಾಡುತ್ತೀರಿ? ನನ್ನನ್ನು ನಿಮ್ಮ ಶತ್ರುವಿನ ಹಾಗೆ ಏಕೆ ಭಾವಿಸುತ್ತೀರಿ?</verse>
				<verse number="25">ಗಾಳಿಯಿಂದ ಹಾರಿಹೋಗುವ ಎಲೆಯನ್ನು ತೊಂದರೆಪಡಿಸುವಿರೋ? ಒಣಗಿದ ಕೊಳೆಯನ್ನು ಬೆನ್ನಟ್ಟುವಿರೋ?</verse>
				<verse number="26">ಏಕೆಂದರೆ ನನಗೆ ವಿರೋಧವಾಗಿ ಕಹಿಯಾದ ತೀರ್ಪನ್ನು ನೀವು ಬರೆದಿರುವಿರಿ; ನನ್ನ ಯೌವನದ ಪಾಪಗಳನ್ನು ನನ್ನ ಮೇಲೆ ಹೊರಿಸಿರುವಿರಿ.</verse>
				<verse number="27">ನನ್ನ ಪಾದಗಳನ್ನು ಸಂಕೋಲೆಗಳಿಂದ ಕಟ್ಟಿಹಾಕಿದ್ದೀರಿ, ನನ್ನ ಪಾದಗಳ ಹಿಮ್ಮಡಿಗಳ ಮೇಲೆ ಗುರುತು ಹಾಕಿದ್ದೀರಿ; ನನ್ನ ಹಾದಿಗಳನ್ನೆಲ್ಲಾ ಲಕ್ಷ್ಯವಿಟ್ಟು ನೋಡುತ್ತೀರಿ.</verse>
				<verse number="28">“ಆದ್ದರಿಂದ ಮಾನವನು ಕೊಳೆತ ವಸ್ತುವಿನಂತೆಯೂ, ನುಸಿಹಿಡಿದ ಬಟ್ಟೆಯಂತೆಯೂ ಅಳಿದು ಹೋಗುತ್ತಾನೆ.</verse>
			</chapter>
			<chapter number="14">
				<verse number="1">“ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನೂ, ಕಷ್ಟಸಂಕಟಗಳಿಂದ ತುಂಬಿದವನೂ ಆಗಿದ್ದಾನೆ.</verse>
				<verse number="2">ಅವನು ಹೂವಿನ ಹಾಗೆ ಅರಳಿ ಬಾಡುವನು; ಅವನು ನೆರಳಿನಂತೆ ಓಡಿಹೋಗುತ್ತಾನೆ, ಶಾಶ್ವತವಾಗಿರುವದಿಲ್ಲ.</verse>
				<verse number="3">ಹಾಗಾದರೆ ಇಂಥವನ ಮೇಲೆ ದೇವರೇ, ನೀವು ನಿಮ್ಮ ಕಣ್ಣಿಟ್ಟೀದೀರಲ್ಲಾ? ನಿಮ್ಮ ನ್ಯಾಯಸ್ಥಾನಕ್ಕೆ ನನ್ನನ್ನು ಬರಮಾಡುತ್ತೀರೋ?</verse>
				<verse number="4">ಅಶುದ್ಧತೆಯಿಂದ ಶುದ್ಧವಾದದ್ದನ್ನು ತರುವವನು ಯಾರು? ಯಾರೂ ತರಲಾರರು!</verse>
				<verse number="5">ಮನುಷ್ಯನ ದಿನಗಳು ಇಷ್ಟೇ ಎಂದು ತೀರ್ಮಾನವಾಗಿದೆ; ಅವನ ತಿಂಗಳುಗಳ ಲೆಕ್ಕ ದೇವರೇ ನಿಮ್ಮ ಬಳಿಯಲ್ಲಿ ಇದೆ; ಅವನು ದಾಟಲಾರದ ಹಾಗೆ ಅವನಿಗೆ ಮೇರೆಗಳನ್ನು ನೇಮಿಸಿದ್ದೀರಿ.</verse>
				<verse number="6">ಆದ್ದರಿಂದ ಅವನು ವಿಶ್ರಾಂತಿ ಪಡೆಯಲೆಂದು ನಿಮ್ಮ ದೃಷ್ಟಿಯನ್ನು ಅವನ ಕಡೆಯಿಂದ ತಿರುಗಿಸಿಬಿಡಿರಿ; ಅವನು ಕೂಲಿಯವನಿಗಿರುವಷ್ಟು ಸಂತೋಷದಿಂದಾದರೂ ತನ್ನ ದಿನವನ್ನು ಕಳೆಯಲಿ.</verse>
				<verse number="7">“ಮರಕ್ಕೆ ಸಹ ಒಂದು ನಿರೀಕ್ಷೆ ಇದೆ: ಅದೇನೆಂದರೆ, ಮರವನ್ನು ಕಡಿದು ಹಾಕಿದರೂ ತಾನು ಮತ್ತೆ ಚಿಗುರುವೆನೆಂಬ ನಿರೀಕ್ಷೆ ಅದಕ್ಕಿದೆ; ಚಿಗುರುವುದನ್ನು ಆ ಮರವು ನಿಲ್ಲಿಸುವುದೇ ಇಲ್ಲ.</verse>
				<verse number="8">ಅದರ ಬೇರು ಭೂಮಿಯಲ್ಲಿ ಹಳೆಯದಾದರೂ, ನೆಲದಲ್ಲಿ ಅದರ ಬುಡ ಸತ್ತಿದ್ದರೂ,</verse>
				<verse number="9">ನೀರಿನ ವಾಸನೆಯಿಂದ ಅದು ಮೊಳೆತು, ಗಿಡದ ಹಾಗೆ ಅದು ಕೊಂಬೆಗಳನ್ನು ಬಿಡುವುದು.</verse>
				<verse number="10">ಆದರೆ ಮನುಷ್ಯನು ಸತ್ತು ಬಿದ್ದಿರುತ್ತಾನೆ; ಅವನು ಕೊನೆಯುಸಿರೆಳೆದಾಗ ಅವನ ಅಂತ್ಯವಾಗುತ್ತದೆ.</verse>
				<verse number="11">ಸರೋವರದ ನೀರು ಒಣಗಿ ಹೋಗುವಂತೆಯೂ, ಬರಗಾಲದಲ್ಲಿ ನದಿಗಳು ಬತ್ತಿಹೋಗುವಂತೆಯೂ,</verse>
				<verse number="12">ಮನುಷ್ಯನು ಸತ್ತು ಮಲಗಿದರೆ ಏಳುವುದೇ ಇಲ್ಲ; ಆಕಾಶಗಳು ಅಳಿದು ಹೋಗುವವರೆಗೆ ಅವನು ಎಚ್ಚರಗೊಳ್ಳುವುದಿಲ್ಲ; ನಿದ್ರೆಯಿಂದ ಎಬ್ಬಿಸಲಾಗುವುದೂ ಇಲ್ಲ.</verse>
				<verse number="13">“ದೇವರೇ, ನೀವು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿಮ್ಮ ಶಿಕ್ಷೆ ಮುಗಿಯುವವರೆಗೂ ನನ್ನನ್ನು ಅಡಗಿಸಿರಿ! ನೀವು ನನಗೆ ಒಂದು ಕಾಲವನ್ನು ನಿಗದಿಪಡಿಸಿ, ಅನಂತರ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು!</verse>
				<verse number="14">ಒಬ್ಬ ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ಆದರೂ ನನಗೆ ನೇಮಕ ಮಾಡಿದ ಪರಿಶ್ರಮದ ದಿನವೆಲ್ಲಾ, ನನಗೆ ಬಿಡುಗಡೆಯಾಗುವವರೆಗೆ ನಾನು ಕಾದುಕೊಂಡಿರುವೆನು.</verse>
				<verse number="15">ದೇವರೇ, ನೀವು ನನ್ನನ್ನು ಕರೆಯುವಿರಿ, ನಾನು ನಿಮಗೆ ಉತ್ತರಕೊಡುವೆನು; ನಿಮ್ಮ ಈ ಸೃಷ್ಟಿಯ ಮೇಲೆ ನೀವು ಹಂಬಲಿಸುವಿರಿ.</verse>
				<verse number="16">ಆಗ ನೀವು ನನ್ನ ಹೆಜ್ಜೆಗಳನ್ನು ಲೆಕ್ಕಿಸುವಿರಿ; ಆದರೆ ನೀವು ನನ್ನ ಪಾಪದ ಬಗ್ಗೆ ದಾಖಲೆ ಇಡುವುದಿಲ್ಲ.</verse>
				<verse number="17">ನನ್ನ ಅಪರಾಧಗಳನ್ನು ಮೂಟೆಕಟ್ಟಿ ಮುದ್ರೆ ಹಾಕಿಬಿಡುವಿರಿ; ನೀವು ನನ್ನ ಅನ್ಯಾಯವನ್ನು ಮರೆಮಾಡುವಿರಿ.</verse>
				<verse number="18">“ಆದರೂ ಬೆಟ್ಟವು ಬಿದ್ದು ಹಾಳಾಗುವಂತೆಯೂ, ಬಂಡೆಯು ತನ್ನ ಸ್ಥಳದಿಂದ ತೊಲಗುವಂತೆಯೂ,</verse>
				<verse number="19">ನೀರು ಕಲ್ಲುಗಳನ್ನು ಸವೆಯಿಸುವಂತೆಯೂ, ಪ್ರವಾಹಗಳು ಭೂಮಿಯ ಮಣ್ಣನ್ನು ಕೊಚ್ಚಿಕೊಂಡು ಹೋಗುವಂತೆಯೂ, ಮನುಷ್ಯನ ನಿರೀಕ್ಷೆಯನ್ನು ನೀವು ನಾಶಮಾಡುತ್ತೀರಿ.</verse>
				<verse number="20">ನೀವು ಅವನ ಮೇಲೆ ಶಾಶ್ವತವಾಗಿ ಮೇಲುಗೈ ಸಾಧಿಸಿರುವದರಿಂದ ಅವನು ಹೊರಟು ಹೋಗುವನು; ನೀವು ಅವನ ಮುಖಭಾವವನ್ನು ಮಾರ್ಪಡಿಸಿ, ಅವನನ್ನು ಕಳುಹಿಸಿಬಿಡುತ್ತೀರಿ.</verse>
				<verse number="21">ಮಕ್ಕಳು ಘನತೆಯನ್ನು ಹೊಂದಿದರೆ, ಅದು ಸತ್ತವರಿಗೆ ತಿಳಿಯುವುದಿಲ್ಲ; ಅವರ ಮಕ್ಕಳು ಕಡಿಮೆ ಸ್ಥಿತಿಗೆ ಬಂದರೆ ಸಹ, ಅದನ್ನು ಸತ್ತವರು ಗ್ರಹಿಸಿಕೊಳ್ಳುವುದಿಲ್ಲ.</verse>
				<verse number="22">ಆದರೆ ಸತ್ತವರು ತಮ್ಮ ದೇಹದ ನೋವನ್ನು ಅನುಭವಿಸುವರು, ಅವರ ಆತ್ಮವು ಅವರಿಗಾಗಿ ಮಾತ್ರ ಪ್ರಲಾಪಿಸುತ್ತಿರುವುದು.”</verse>
			</chapter>
			<chapter number="15">
				<verse number="1">ಆಗ ತೇಮಾನ್ಯನಾದ ಎಲೀಫಜನು ಹೀಗೆಂದನು:</verse>
				<verse number="2">“ಜ್ಞಾನಿಯು ವ್ಯರ್ಥ ತಿಳುವಳಿಕೆಯನ್ನು ನುಡಿದು ಪೂರ್ವದಿಕ್ಕಿನ ಗಾಳಿಯಿಂದ ತನ್ನ ಹೊಟ್ಟೆ ತುಂಬಿಸಿಕೊಳ್ಳುವುದು ಉಂಟೋ?</verse>
				<verse number="3">ನಿಷ್ಪ್ರಯೋಜಕವಾದ ನುಡಿಗಳಿಂದಲೂ, ಕೆಲಸಕ್ಕೆ ಬಾರದ ಮಾತುಗಳಿಂದಲೂ ಜ್ಞಾನಿಯು ವಾದಿಸುವನೋ?</verse>
				<verse number="4">ನೀನಾದರೋ ದೇವರ ಭಯಭಕ್ತಿಯನ್ನು ಹಾಳುಮಾಡುತ್ತಿರುವೆ. ದೇವರ ಮೇಲಿನ ಭಕ್ತಿಯನ್ನು ಕಡಿಮೆ ಮಾಡುತ್ತಿರುವೆ.</verse>
				<verse number="5">ಏಕೆಂದರೆ ನಿನ್ನ ಪಾಪವೇ ನಿನ್ನ ಬಾಯಿಯನ್ನು ಪ್ರೇರೇಪಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆಯ್ದುಕೊಳ್ಳುತ್ತಿರುವೆ.</verse>
				<verse number="6">ನಾನಲ್ಲ, ನಿನ್ನ ಬಾಯಿಯೇ ನಿನ್ನನ್ನು ಖಂಡಿಸುತ್ತದೆ; ಹೌದು, ನಿನ್ನ ತುಟಿಗಳೇ ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.</verse>
				<verse number="7">“ನೀನು ಮೊದಲು ಹುಟ್ಟಿದ ಪುರುಷನೋ? ಬೆಟ್ಟಗಳಿಗೆ ಮುಂಚಿತವಾಗಿ ಹುಟ್ಟಿದವನೋ?</verse>
				<verse number="8">ನೀನು ದೇವರ ಆಲೋಚನಾ ಸಭೆಯಲ್ಲಿ ಸದಸ್ಯನೋ? ಜ್ಞಾನವು ನಿನಗೆ ಮಾತ್ರ ಮೀಸಲೋ?</verse>
				<verse number="9">ನಮಗೆ ತಿಳಿಯದೆ ಇರುವುದನ್ನು ನೀನು ಏನು ತಿಳಿದುಕೊಂಡಿರುವೆ? ನಮ್ಮಲ್ಲಿ ಇಲ್ಲದ ಯಾವ ಒಳನೋಟವನ್ನು ನೀನು ಅರ್ಥಮಾಡಿಕೊಂಡಿರುವೆ?</verse>
				<verse number="10">ತಲೆ ನರೆತವರೂ, ಹೆಚ್ಚು ಮುದುಕರಾದವರೂ, ನಿನ್ನ ತಂದೆಗಿಂತ ವೃದ್ಧರಾದವರೂ ನಮ್ಮಲ್ಲಿ ಇದ್ದಾರೆ.</verse>
				<verse number="11">ದೇವರ ಸಂತೈಸುವಿಕೆಗಳೂ ಮೃದುವಾದ ಹಿತವಚನಗಳು ನಿನಗೆ ಸಾಕಾಗಿರುವುದಿಲ್ಲವೋ?</verse>
				<verse number="12">ನಿನ್ನ ಹೃದಯವು ನಿನ್ನನ್ನು ಸೆಳೆದಿರುವುದು ಏಕೆ? ಏಕೆ ನಿನ್ನ ಕಣ್ಣು ಕಿಡಿಕಾರುತ್ತಿದೆ?</verse>
				<verse number="13">ನೀನು ದೇವರ ವಿರುದ್ಧ ನಿನ್ನ ಕೋಪವನ್ನು ಹೊರಹಾಕುತ್ತಿರುವೆ? ನಿನ್ನ ಬಾಯಿಂದ ಕೋಪದ ಮಾತುಗಳನ್ನು ಹೊರಡಿಸುತ್ತೀಯಲ್ಲಾ?</verse>
				<verse number="14">“ಮನುಷ್ಯನು ಎಷ್ಟರವನು? ಅವನು ಶುದ್ಧನಿರಲು ಸಾಧ್ಯವೇ? ಸ್ತ್ರೀಯರಲ್ಲಿ ಹುಟ್ಟಿದವನು ನೀತಿವಂತನಾಗಿರಬಹುದೆ?</verse>
				<verse number="15">ದೇವರು ತಮ್ಮ ಪರಿಶುದ್ಧರನ್ನು ಆತುಕೊಂಡಿರುವುದಿಲ್ಲ; ಆಕಾಶಗಳೂ ದೇವರ ದೃಷ್ಟಿಯಲ್ಲಿ ಶುದ್ಧವಲ್ಲ.</verse>
				<verse number="16">ಹಾಗಿರುವಾಗ, ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು, ದೇವರ ದೃಷ್ಟಿಯಲ್ಲಿ ಎಷ್ಟು ಅಲ್ಪನೂ ಅಶುದ್ಧನೂ ಆಗಿದ್ದಾನಲ್ಲವೇ?</verse>
				<verse number="17">“ಕೇಳು, ನಾನು ನಿನಗೆ ವಿವರಿಸುತ್ತೇನೆ, ನಾನು ನೋಡಿದ್ದನ್ನು ನಿನಗೆ ಹೇಳುತ್ತೇನೆ,</verse>
				<verse number="18">ಜ್ಞಾನಿಗಳು ತಮ್ಮ ಪೂರ್ವಜರಿಂದ ಕಲಿತಿದ್ದನ್ನೇ ಮರೆಮಾಡದೆ ನಮಗೆ ಪ್ರಕಟಿಸಿದರು.</verse>
				<verse number="19">ಅವರಿಗೆ ದೇಶವು ಕೊಡಲಾಗಿತ್ತು; ಅವರ ಮಧ್ಯದಲ್ಲಿ ಅಂದು ಪರದೇಶೀಯರು ಹಾದುಹೋಗುವಂತಿರಲಿಲ್ಲ.</verse>
				<verse number="20">ಜ್ಞಾನಿಗಳು ಹೇಳಿದ್ದೇನೆಂದರೆ: ದುಷ್ಟನು ತನ್ನ ಜೀವಮಾನವೆಲ್ಲಾ ವೇದನೆಪಡುತ್ತಾನೆ; ನಿರ್ದಯನು ತನ್ನ ವರ್ಷಗಳೆಲ್ಲ ತೊಂದರೆಗಳನ್ನು ಸಂಗ್ರಹಿಸುತ್ತಾನೆ.</verse>
				<verse number="21">ಭಯಂಕರವಾದ ಸಂಗತಿಗಳು ಅವನ ಕಿವಿಗೆ ಬೀಳುತ್ತವೆ; ಎಲ್ಲವು ಸುಖವಾಗಿರುವಾಗ ಸುಲಿಗೆ ಮಾಡುವವನು ದುಷ್ಟನ ಮೇಲೆ ದಾಳಿ ಮಾಡುತ್ತಾನೆ.</verse>
				<verse number="22">ಕತ್ತಲೆಯೊಳಗಿಂದ ಪಾರಾಗುತ್ತೇನೆಂದು ದುಷ್ಟನು ನಂಬುವುದಿಲ್ಲ; ಅವನ ಖಡ್ಗವು ಅವನಿಗಾಗಿ ಕಾದಿದೆ.</verse>
				<verse number="23">ಅವನು ಆಹಾರ ಎಲ್ಲಿ ಎಂದು ರಣಹದ್ದಿನ ಹಾಗೆ ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ.</verse>
				<verse number="24">ಇಕ್ಕಟ್ಟೂ, ಸಂಕಟವೂ ಅವನನ್ನು ಹೆದರಿಸಿ, ಆಕ್ರಮಣ ಮಾಡಲು ಸಿದ್ಧನಾದ ರಾಜನಂತೆ ತೊಂದರೆಗಳು ಅವನನ್ನು ಆವರಿಸುತ್ತವೆ,</verse>
				<verse number="25">ಏಕೆಂದರೆ ದುಷ್ಟನು ದೇವರಿಗೆ ವಿರೋಧವಾಗಿ ಮುಷ್ಠಿ ತೋರಿಸಿದನಲ್ಲಾ, ಸರ್ವಶಕ್ತರ ಎದುರು ನಿಂತು ಶೂರನಂತೆ ಮೆರೆದನಲ್ಲಾ.</verse>
				<verse number="26">ದೇವರ ವಿರೋಧವಾಗಿ ಬಲವುಳ್ಳ ದೊಡ್ಡ ಗುರಾಣಿಯೊಂದಿಗೆ ಓಡುತ್ತಾನೆ.</verse>
				<verse number="27">“ದುಷ್ಟನು ತನ್ನ ಮುಖದಲ್ಲಿ ಕೊಬ್ಬೇರಿಸಿಕೊಂಡು, ತನ್ನ ಸೊಂಟದಲ್ಲಿ ಬೊಜ್ಜನ್ನು ಬೆಳೆಸಿಕೊಂಡಿದ್ದಾನೆ.</verse>
				<verse number="28">ಹಾಳಾದ ಪಟ್ಟಣಗಳಲ್ಲಿಯೂ, ಯಾರೂ ವಾಸಿಸದ, ಕುಸಿಯಲು ಸಿದ್ಧವಾದಂಥ ಮನೆಗಳಲ್ಲಿಯೂ ವಾಸಮಾಡಿಕೊಂಡಿದ್ದಾನೆ.</verse>
				<verse number="29">ದುಷ್ಟನು ಐಶ್ವರ್ಯವಂತನಾಗುವುದಿಲ್ಲ; ಆದರೂ ಅವನ ಆಸ್ತಿಯು ಸ್ಥಿರವಲ್ಲ; ಅವನ ಸೊತ್ತು ಭೂಮಿಯ ಮೇಲೆ ವಿಸ್ತಾರವಾಗುವುದಿಲ್ಲ.</verse>
				<verse number="30">ಕತ್ತಲೆಯೊಳಗಿಂದ ಅವನು ಪಾರಾಗುವದಿಲ್ಲ; ಕಿಚ್ಚು ಅವನ ಕೊಂಬೆಗಳನ್ನು ಒಣಗಿಸುವುದು; ದೇವರ ಬಾಯಿಯ ಶ್ವಾಸದಿಂದ ಅವನು ತೊಲಗಿ ಹೋಗುವನು.</verse>
				<verse number="31">ದುಷ್ಟನು ವ್ಯರ್ಥವಾದದ್ದನ್ನು ನಂಬಿ ಮೋಸಹೋಗದಿರಲಿ. ಏಕೆಂದರೆ, ವ್ಯರ್ಥವಾದವುಗಳಿಂದ ಅವನಿಗಾಗುವ ಪ್ರತಿಫಲವು ಶೂನ್ಯವೇ.</verse>
				<verse number="32">ದುಷ್ಟನು ತನ್ನ ಸಮಯಕ್ಕಿಂತ ಮೊದಲು ಬತ್ತಿ ಹೋಗುವನು; ಅವನ ಕೊಂಬೆಯು ಹಸಿರಾಗಿರುವುದಿಲ್ಲ.</verse>
				<verse number="33">ದ್ರಾಕ್ಷೆಯ ಬಳ್ಳಿಯಂತೆ ಅವನು ತನ್ನ ಮಾಗದ ಫಲವನ್ನು ಹಾಳುಮಾಡಿಕೊಳ್ಳುವನು; ದುಷ್ಟನು ಹೂವುಗಳನ್ನು ಉದುರಿಸುವ ಓಲಿವ್ ಎಣ್ಣೆಯ ಮರದ ಹಾಗೆ ಇರುವನು.</verse>
				<verse number="34">ದೇವರಿಲ್ಲದವರ ಸಹವಾಸ ಬಂಜರು, ಬೆಂಕಿಯು ಲಂಚಕೋರರ ಮನೆಗಳನ್ನು ಸುಟ್ಟುಹಾಕುವುದು.</verse>
				<verse number="35">ಅವರು ಹಿಂಸೆಯನ್ನು ಗರ್ಭಧರಿಸಿ, ಕೆಟ್ಟದ್ದನ್ನು ಹೆರುವರು; ಅವರ ಹೊಟ್ಟೆಯು ವಂಚನೆಯಿಂದ ತುಂಬಿರುವುದು.”</verse>
			</chapter>
			<chapter number="16">
				<verse number="1">ಯೋಬನು ಉತ್ತರಕೊಟ್ಟು ಹೇಳಿದ್ದೇನೆಂದರೆ:</verse>
				<verse number="2">“ನಾನು ಇವುಗಳ ಹಾಗೆ ಅನೇಕ ಮಾತುಗಳನ್ನು ಕೇಳಿದ್ದೇನೆ; ನೀವೆಲ್ಲರೂ ಆದರಣೆ ಕೊಡುವವರಲ್ಲ, ಬಾಧಿಸುವವರೇ.</verse>
				<verse number="3">ನಿಮ್ಮ ವ್ಯರ್ಥ ಮಾತುಗಳಿಗೆ ಅಂತ್ಯ ಇಲ್ಲವೋ? ನನ್ನೊಂದಿಗೆ ವಾದಿಸಲು ನಿಮ್ಮನ್ನು ಒತ್ತಾಯಪಡಿಸಿದ್ದೇನು?</verse>
				<verse number="4">ನೀವು ನನ್ನ ಸ್ಥಿತಿಯಲ್ಲಿ ಇದ್ದಿದ್ದರೆ, ನಾನು ಸಹ ನಿಮ್ಮ ಹಾಗೆ ಮಾತಾಡುತ್ತಿದ್ದೆ; ನಾನು ನಿಮ್ಮ ವಿರುದ್ಧ ಪದಪ್ರಯೋಗಿಸಿ ಮಾತಾಡಬಹುದಾಗಿತ್ತು; ಹೌದು, ನಿಮ್ಮ ವಿಷಯದಲ್ಲಿ ಗೇಲಿ ಮಾಡುತ್ತಾ, ನಾನು ನನ್ನ ತಲೆಯಾಡಿಸಬಹುದಾಗಿತ್ತು.</verse>
				<verse number="5">ಆದರೆ, ನಾನು ನನ್ನ ಬಾಯಿಮಾತಿನಿಂದ ನಿಮ್ಮನ್ನು ಪ್ರೋತ್ಸಾಹಿಸುವೆನು; ನನ್ನ ಆದರಣೆಯ ಮಾತುಗಳು ನಿಮಗೆ ಉಪಶಮನ ಮಾಡುವುದು.</verse>
				<verse number="6">“ನಾನು ಮಾತನಾಡಿದರೂ ನನ್ನ ನೋವಿಗೆ ಉಪಶಮನವಾಗುವುದಿಲ್ಲ; ನಾನು ಮೌನವಾಗಿದ್ದರೂ, ನನ್ನ ನೋವು ನಿವಾರಣೆಯಾಗುವುದಿಲ್ಲ.</verse>
				<verse number="7">ದೇವರೇ, ನೀವು ನನ್ನನ್ನು ಬಲಹೀನಪಡಿಸಿದ್ದೀರಿ; ನೀವು ನನ್ನ ಕುಟುಂಬದವರನ್ನೆಲ್ಲಾ ಇಲ್ಲದಂತೆ ಮಾಡಿದ್ದೀರಿ.</verse>
				<verse number="8">ನೀವು ನನ್ನ ಮುಖವೆಲ್ಲಾ ಸುಕ್ಕುಗಳಿಂದ ತುಂಬಿಸಿದ್ದೀರಿ; ನನ್ನ ಬಿಕ್ಕಟ್ಟೇ ನನಗೆ ವಿರೋಧವಾಗಿ ಎದ್ದು ಸಾಕ್ಷಿ ಕೊಡುತ್ತವೆ;</verse>
				<verse number="9">ದೇವರು ತಮ್ಮ ಬೇಸರದಲ್ಲಿ ನನ್ನನ್ನು ದಂಡಿಸಿದ್ದಾರೆ; ನನ್ನ ದೇವರು ನನ್ನ ಮೇಲೆ ಅತೃಪ್ತರಾಗಿದ್ದಾರೆ; ನನ್ನ ವೈರಿಯು ನನ್ನನ್ನು ದ್ವೇಷದಿಂದ ನೋಡುತ್ತಿದ್ದಾನೆ.</verse>
				<verse number="10">ನನ್ನ ಮೇಲೆ ಜನರು ತಮ್ಮ ಬಾಯಿ ಕಿಸಿಯುತ್ತಾರೆ; ನಿಂದಿಸಿ ನನ್ನ ಕೆನ್ನೆಗಳನ್ನು ಬಡಿಯುತ್ತಾರೆ, ನನಗೆ ವಿರೋಧವಾಗಿ ಕೂಡಿಕೊಳ್ಳುತ್ತಾರೆ.</verse>
				<verse number="11">ದೇವರು ನನ್ನನ್ನು ದುಷ್ಟರ ಕೈಗೆ ಒಪ್ಪಿಸಿಬಿಟ್ಟಿದ್ದಾರೆ; ಹೌದು, ದುಷ್ಟರ ಕೈಗೆ ನನ್ನನ್ನು ಎಸೆದುಬಿಟ್ಟಿದ್ದಾರೆ.</verse>
				<verse number="12">ನಾನು ನೆಮ್ಮದಿಯಿಂದ ಇದ್ದಾಗ ದೇವರು ನನ್ನನ್ನು ಚದರಿಸಿದ್ದಾರೆ; ನಾನು ಮಡಕೆ ಒಡೆದುಬಿದ್ದಂತೆ ಇದ್ದೇನೆ. ನನ್ನನ್ನು ತಮಗೆ ಗುರಿ ಹಲಗೆಯಾಗಿ ನಿಲ್ಲಿಸಿಕೊಂಡಿದ್ದಾರೆ.</verse>
				<verse number="13">ದೇವರ ಬಾಣಗಳು ನನ್ನನ್ನು ಸುತ್ತುವರಿದಿವೆ; ನಾನು ಕರುಣೆಯಿಲ್ಲದೆ ನೆಲದ ಮೇಲೆ ಪಿತ್ತವನ್ನು ಸುರಿದು ಬಿದ್ದವನಂತೆ ಇದ್ದೇನೆ. ನನ್ನ ಪಿತ್ತವನ್ನು ಭೂಮಿಗೆ ಚೆಲ್ಲುತ್ತಾರೆ.</verse>
				<verse number="14">ದೇವರು ಮತ್ತೆ ಮತ್ತೆ ನನ್ನನ್ನು ಮುರಿಯುತ್ತಿದ್ದಾರೆ; ಅದು ಶೂರನು ಓಡಿಬಂದು ನನ್ನ ಮೇಲೆ ದಾಳಿಮಾಡಿದಂತಿದೆ.</verse>
				<verse number="15">“ನಾನು ಗೋಣಿತಟ್ಟು ಹೊಲಿದು ನನ್ನ ಮೈಮೇಲೆ ಹಾಕಿಕೊಂಡಿದ್ದೇನೆ; ನನ್ನ ಗೌರವವನ್ನು ಧೂಳಿನಲ್ಲಿ ಮರೆಮಾಡಿದ್ದೇನೆ.</verse>
				<verse number="16">ನನ್ನ ಮುಖವು ಅಳುವುದರಿಂದ ಕೆಂಪಾಯಿತು; ನನ್ನ ರೆಪ್ಪೆಗಳ ಮೇಲೆ ಮರಣದ ಅಂಧಕಾರವು ಕವಿದಿದೆ.</verse>
				<verse number="17">ಆದರೂ ನನ್ನ ಕೈಗಳಲ್ಲಿ ಹಿಂಸಾಚಾರವಿಲ್ಲ; ನನ್ನ ಪ್ರಾರ್ಥನೆಯು ಶುದ್ಧವಾಗಿದೆ.</verse>
				<verse number="18">“ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ, ನನ್ನ ಕೂಗು ವಿಶ್ರಾಂತಿ ಹೊಂದದಿರಲಿ!</verse>
				<verse number="19">ಈಗಲೂ ಪರಲೋಕದಲ್ಲಿ ನನಗೆ ಒಬ್ಬ ಸಾಕ್ಷಿ ಇದ್ದಾರೆ; ಹೌದು, ನನ್ನ ವಕೀಲರು ಉನ್ನತದಲ್ಲಿದ್ದಾರೆ.</verse>
				<verse number="20">ಆದರೆ ನನ್ನ ಮಿತ್ರ ನನಗಾಗಿ ವಿಜ್ಞಾಪನೆಮಾಡುತ್ತಿದ್ದಾರೆ; ನನ್ನ ಕಣ್ಣುಗಳು ದೇವರ ಮುಂದೆ ಕಣ್ಣೀರು ಸುರಿಸುತ್ತವೆ.</verse>
				<verse number="21">ಒಬ್ಬ ಮನುಷ್ಯನು ತನ್ನ ಮಿತ್ರನಿಗೋಸ್ಕರ ಬೇಡಿಕೊಳ್ಳುವಂತೆ, ಅವರು ಸಹ ಮನುಷ್ಯನಿಗಾಗಿ ದೇವರ ಮುಂದೆ ವಾದಿಸುತ್ತಿದ್ದಾರೆ.</verse>
				<verse number="22">“ನಾನು ಹಿಂದಿರುಗಿ ಬಾರದ ದಾರಿಯನ್ನು ಹಿಡಿಯಲು, ಇನ್ನೂ ಕೆಲವೇ ವರ್ಷಗಳು ಉಳಿದಿವೆ.</verse>
			</chapter>
			<chapter number="17">
				<verse number="1">ನನ್ನ ಆತ್ಮ ಮುರಿದುಹೋಗಿದೆ; ನನ್ನ ದಿನಗಳು ಮುಗಿದಿವೆ; ಸಮಾಧಿ ನನಗೆ ಸಿದ್ಧವಾಗಿದೆ.</verse>
				<verse number="2">ಅಪಹಾಸ್ಯಗಾರರು ನನ್ನ ಬಳಿಯಲ್ಲಿ ಇದ್ದಾರೆ; ಅವರ ಹಗೆತನದ ಬಗ್ಗೆ ನಾನು ಎಚ್ಚರವಾಗಿರಬೇಕು.</verse>
				<verse number="3">“ದೇವರೇ, ನೀವು ಹಕ್ಕಾಗಿ ಕೇಳುವ ಈಡನ್ನು ನೀವೇ ನನಗೆ ಕೊಡಿರಿ; ನಿಮ್ಮನ್ನು ಬಿಟ್ಟು ಯಾರು ನನಗೆ ಭದ್ರತೆಯನ್ನು ಕೊಡುವವರು?</verse>
				<verse number="4">ತಿಳುವಳಿಕೆ ಪ್ರವೇಶಿಸದಂತೆ ನೀವು ನನ್ನ ಸ್ನೇಹಿತರ ಮನಸ್ಸನ್ನು ಮುಚ್ಚಿರುವಿರಿ; ಆದ್ದರಿಂದ ನೀವು ಅವರನ್ನು ಜಯಿಸುವುದಕ್ಕೆ ಬಿಡುವುದಿಲ್ಲ.</verse>
				<verse number="5">ಯಾರು ಸ್ವಂತ ಲಾಭಕ್ಕಾಗಿ ಸ್ನೇಹಿತರಿಗೆ ದ್ರೋಹ ಮಾಡುತ್ತಾರೋ, ಅಂಥವರ ಮಕ್ಕಳ ಕಣ್ಣುಗಳು ಮಂಕಾಗಿಬಿಡುವುದು.</verse>
				<verse number="6">“ದೇವರು ನನ್ನನ್ನು ಜನರ ಕಟ್ಟುಗಾದೆಗೆ ಆಸ್ಪದ ಮಾಡಿದ್ದಾರೆ; ನನ್ನನ್ನು ಕಾಣುವವರು ನನ್ನ ಮುಖಕ್ಕೆ ಉಗುಳುವಂತೆ ಮಾಡಿದ್ದಾರೆ.</verse>
				<verse number="7">ನನ್ನ ಕಣ್ಣು ದುಃಖದಿಂದ ಮೊಬ್ಬಾಗಿವೆ; ನನ್ನ ಅಂಗಗಳೆಲ್ಲಾ ನೆರಳಿನ ಹಾಗೆ ಇವೆ.</verse>
				<verse number="8">ಪ್ರಾಮಾಣಿಕರು ಇದನ್ನು ನೋಡಿ ಬೆರಗಾಗಿದ್ದಾರೆ; ನಿರಪರಾಧಿಯು ಭಕ್ತಿಹೀನರ ವಿಷಯದಲ್ಲಿ ಎಚ್ಚರಗೊಳ್ಳುತ್ತಾನೆ.</verse>
				<verse number="9">ಆದರೆ ನೀತಿವಂತನು ತನ್ನ ಮಾರ್ಗದಲ್ಲಿ ಮುಂದುವರಿಯುವನು; ಶುದ್ಧ ಕೈಗಳುಳ್ಳವರು ಬಲದಲ್ಲಿ ಬೆಳೆಯುತ್ತಾ ಇರುವರು.</verse>
				<verse number="10">“ಆದರೆ ನೀವೆಲ್ಲರೂ ಬಂದು ಮತ್ತೆ ವಾದ ಮಾಡಲು ಪ್ರಯತ್ನಿಸಿರಿ! ನಿಮ್ಮಲ್ಲಿ ನಾನು ಒಬ್ಬ ಜ್ಞಾನಿಯನ್ನು ಸಹ ಕಂಡುಕೊಳ್ಳಲಿಲ್ಲ.</verse>
				<verse number="11">ನನ್ನ ದಿನಗಳು ಮುಗಿದು ಹೋದವು; ನನ್ನ ಹೃದಯದ ಬಯಕೆಯಾಗಿರುವ ನನ್ನ ಉದ್ದೇಶಗಳು ಭಂಗವಾದವು.</verse>
				<verse number="12">ನನ್ನ ಸ್ನೇಹಿತರು ರಾತ್ರಿಯನ್ನು ಹಗಲು ಎಂದು ಸಾಧಿಸುತ್ತಾರೆ; ಕತ್ತಲಿಂದ ಬೆಳಕು ಬೇಗ ಬರಲಿದೆ ಎನ್ನುತ್ತಾರೆ.</verse>
				<verse number="13">ಸಮಾಧಿಯೇ ನನ್ನ ಮನೆಯೆಂದು ನಾನು ನಿರೀಕ್ಷಿಸಿದರೆ, ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿಕೊಂಡರೆ,</verse>
				<verse number="14">ಸಮಾಧಿಗೆ, ‘ನೀನು ನನ್ನ ತಂದೆ’ ಎಂದೂ, ಹುಳಕ್ಕೆ, ‘ನನ್ನ ತಾಯಿ, ನನ್ನ ತಂಗಿ’ ಎಂದೂ ನಾನು ಕರೆಯುವುದಾದರೆ,</verse>
				<verse number="15">ನನ್ನ ನಿರೀಕ್ಷೆ ಎಲ್ಲಿ? ನನ್ನ ನಿರೀಕ್ಷೆಯನ್ನು ಯಾರು ನೋಡುವರು?</verse>
				<verse number="16">ನಿರೀಕ್ಷೆಯು ನನ್ನ ಸಂಗಡ ಪಾತಾಳಕ್ಕೆ ಇಳಿದು ಬರುವುದೇ? ನಾವು ಜೊತೆಯಾಗಿ ಮಣ್ಣಿಗೆ ಸೇರಲಾದೀತೆ?”</verse>
			</chapter>
			<chapter number="18">
				<verse number="1">ಆಗ ಶೂಹ್ಯನಾದ ಬಿಲ್ದದನು ಉತ್ತರಕೊಟ್ಟು ಹೀಗೆಂದನು:</verse>
				<verse number="2">“ಯೋಬನೇ, ಈ ಮಾತುಗಳನ್ನು ನೀನು ಯಾವಾಗ ಕೊನೆಗೊಳಿಸುತ್ತೀ? ವಿವೇಕಿಯಾಗು, ಆಮೇಲೆ ಮಾತನಾಡೋಣ.</verse>
				<verse number="3">ನಮ್ಮನ್ನು ಮೃಗಗಳೆಂದು ಎಣಿಸಿರುವೆಯಾ? ನಿನ್ನ ದೃಷ್ಟಿಯಲ್ಲಿ ನಾವು ದಡ್ಡರೋ?</verse>
				<verse number="4">ಕೋಪದಿಂದ ನಿನ್ನನ್ನು ನೀನೇ ಸೀಳಿಕೊಳ್ಳುವೆಯಾ? ನಿನ್ನ ನಿಮಿತ್ತ ಭೂಮಿ ಹಾಳಾಗಬೇಕೋ? ಬಂಡೆಯು ತನ್ನ ಸ್ಥಳದಿಂದ ತೊಲಗಬೇಕೋ?</verse>
				<verse number="5">“ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿಹೋಗುವುದು; ಅವನ ಬಾಳಿನ ಬೆಂಕಿಯ ಜ್ವಾಲೆಯು ಉರಿಯದೆ ಹೋಗುವುದು.</verse>
				<verse number="6">ಅವನ ಗುಡಾರದಲ್ಲಿ ಬೆಳಕು ಕತ್ತಲಾಗುವುದು; ಅವನ ಮೇಲಣ ತೂಗು ದೀಪವು ಆರಿಹೋಗುವುದು.</verse>
				<verse number="7">ಅವನ ಬಲವುಳ್ಳ ಹೆಜ್ಜೆಗಳು ದುರ್ಬಲಗೊಳ್ಳುವುದು; ಅವನ ಯೋಜನೆಗಳೇ ಅವನನ್ನು ಕೆಡವಿಹಾಕುವವು.</verse>
				<verse number="8">ಏಕೆಂದರೆ ದುಷ್ಟನು ತನ್ನ ಹೆಜ್ಜೆಗಳಿಂದಲೇ ಬಲೆಯಲ್ಲಿ ಬೀಳುವನು; ಅವನು ಕುಣಿಯಲ್ಲಿ ಬಿದ್ದು ಅಲೆದಾಡುವನು.</verse>
				<verse number="9">ಬೋನು ಅವನ ಹಿಮ್ಮಡಿಯನ್ನು ಹಿಡಿದುಕೊಳ್ಳುವುದು; ಉರುಳು ಅವನನ್ನು ಬಿಗಿಯಾಗಿ ಹಿಡಿದಿಟ್ಟುಕೊಳ್ಳುವುದು.</verse>
				<verse number="10">ನೆಲದ ಮೇಲೆ ಪಾಶವೂ, ದಾರಿಯಲ್ಲಿ ಜಾಲವೂ ಅವನಿಗೆ ಹೊಂಚಿಕೊಂಡಿರುವುವು.</verse>
				<verse number="11">ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ, ಅವನ ಕಾಲುಗಳನ್ನು ಓಡುವಂತೆ ಮಾಡುವುವು.</verse>
				<verse number="12">ಅವನ ಬಲವು ಕುಸಿಯುವುದು; ವಿನಾಶವು ಅವನ ಬೀಳುವಿಕೆಗಾಗಿ ಸಿದ್ಧವಾಗಿರುವುದು.</verse>
				<verse number="13">ಅದು ಅವನ ಚರ್ಮದ ಬಲವನ್ನು ತಿಂದುಬಿಡುವುದು; ಮರಣದ ಚೊಚ್ಚಲತನವು ಅವನ ಅಂಗಾಂಗಗಳನ್ನು ನುಂಗಿಬಿಡುವುದು.</verse>
				<verse number="14">ಅವನು ಭದ್ರತೆಯ ಗುಡಾರದಿಂದ ಹೊರಬೀಳುವನು. ಅವನು ಭಯಂಕರ ಅರಸನ ಬಳಿಗೆ ಸಾಗಬೇಕಾಗುವುದು.</verse>
				<verse number="15">ಬೆಂಕಿಯು ಅವನ ಮನೆಯನ್ನು ಸುಡುವುದು; ಅವನ ಮನೆಯ ಮೇಲೆ ಗಂಧಕವನ್ನು ಎರಚಲಾಗುವುದು.</verse>
				<verse number="16">ಬುಡದಿಂದ ಅವನ ಬೇರುಗಳು ಒಣಗುವುವು; ಮೇಲಿನಿಂದ ಅವನ ರೆಂಬೆಯು ಬಾಡುವುದು.</verse>
				<verse number="17">ಅವನ ಸ್ಮರಣೆಯು ಭೂಮಿಯಿಂದ ಅಳಿದುಹೋಗುವುದು; ನಾಡಿನಲ್ಲಿ ಅವನ ಹೆಸರು ಇಲ್ಲದೆ ಹೋಗುವುದು.</verse>
				<verse number="18">ಬೆಳಕಿನಿಂದ ಅವನನ್ನು ಕತ್ತಲೆಗೆ ದಬ್ಬಲಾಗುವುದು; ಅವನು ಲೋಕದಿಂದ ಬಹಿಷ್ಕರಿಸಲಾಗುವನು.</verse>
				<verse number="19">ಅವನ ಜನರಲ್ಲಿ ಅವನಿಗೆ ಮಗನೂ, ಮೊಮ್ಮಗನೂ ಇರುವುದಿಲ್ಲ, ಅವನು ವಾಸಿಸಿದ ಸ್ಥಳದಲ್ಲಿ ಯಾರೂ ಉಳಿಯುವುದಿಲ್ಲ.</verse>
				<verse number="20">ಪಶ್ಚಿಮ ಜನರು ಅವನ ಸ್ಥಿತಿಯನ್ನು ನೋಡಿ ಆಶ್ಚರ್ಯಪಡುವರು; ಪೂರ್ವದ ಕಡೆಯವರನ್ನು ದಿಗಿಲು ಹಿಡಿಯುವುದು.</verse>
				<verse number="21">ನಿಶ್ಚಯವಾಗಿ ದುಷ್ಟರ ನೆಲೆಯು ಹೀಗೆಯೇ ಇರುವುದು; ದೇವರನ್ನು ಅರಿಯದವನ ಸ್ಥಿತಿ ಇದೇ.”</verse>
			</chapter>
			<chapter number="19">
				<verse number="1">ಯೋಬನು ಉತ್ತರಕೊಟ್ಟು ಹೇಳಿದ್ದೇನೆಂದರೆ:</verse>
				<verse number="2">“ಎಷ್ಟರವರೆಗೆ ನನ್ನ ನೋಯಿಸಿ, ನನ್ನನ್ನು ಮಾತುಗಳಿಂದ ಜಜ್ಜುವಿರಿ?</verse>
				<verse number="3">ಈಗ ಹತ್ತು ಸಾರಿ ನನ್ನನ್ನು ನಿಂದಿಸಿದ್ದೀರಿ; ನಾಚಿಕೆಯಿಲ್ಲದೆ ನೀವು ನನ್ನ ಮೇಲೆ ಆಕ್ರಮಣ ಮಾಡುತ್ತೀರಿ.</verse>
				<verse number="4">ನಿಜವಾಗಿ ನಾನು ತಪ್ಪು ಮಾಡಿದ್ದರೆ ನಿಮಗೇನು? ನನ್ನ ತಪ್ಪು ನನ್ನ ಸಂಗಡ ಇರಲಿ.</verse>
				<verse number="5">ನೀವು ನನಗಿಂತ ಉತ್ತಮರು ಎಂದು ಭಾವಿಸುತ್ತಿದ್ದೀರಿ; ನನಗಾದ ಹೀನಸ್ಥಿತಿಯನ್ನು ನನಗೆ ವಿರೋಧವಾಗಿ ಉಪಯೋಗಿಸುತ್ತೀರಿ.</verse>
				<verse number="6">ದೇವರಿಂದಲೇ ನನಗೆ ಅನ್ಯಾಯವಾಗಿದೆ; ದೇವರು ತಮ್ಮ ಬಲೆಯನ್ನು ನನ್ನ ಮೇಲೆ ಬೀಸಿದ್ದಾರೆಂದು ನಿಮಗೆ ತಿಳಿದಿರಲಿ.</verse>
				<verse number="7">“ ‘ಹಿಂಸೆ,’ ಎಂದು ನಾನು ಕೂಗಿಕೊಂಡರೂ ನನಗೆ ಉತ್ತರ ಕೊಡುವವರಿಲ್ಲ; ಗಟ್ಟಿಯಾಗಿ ಮೊರೆಯಿಟ್ಟರೂ ನ್ಯಾಯ ದೊರಕುವುದಿಲ್ಲ.</verse>
				<verse number="8">ನಾನು ಮುಂದೆ ಹೋಗದಂತೆ ದೇವರು ನನ್ನ ದಾರಿಗೆ ಬೇಲಿ ಹಾಕಿದ್ದಾರೆ; ನನ್ನ ಹಾದಿಗಳನ್ನು ಕತ್ತಲು ಕವಿಯುವಂತೆ ಮಾಡಿದ್ದಾರೆ.</verse>
				<verse number="9">ದೇವರು ನನ್ನ ಘನತೆಯನ್ನು ತೆಗೆದುಹಾಕಿದ್ದಾರೆ; ನನ್ನ ಕಿರೀಟವನ್ನು ನನ್ನ ತಲೆಯಿಂದ ತೆಗೆದುಹಾಕಿದ್ದಾರೆ.</verse>
				<verse number="10">ನನ್ನ ಸುತ್ತಲೂ ದಾಳಿಯಾಗಿದ್ದರಿಂದ, ನಾನು ಕ್ಷಯಿಸುತ್ತಿದ್ದೇನೆ; ಮರವನ್ನು ಕೀಳುವ ಹಾಗೆ ದೇವರು ನನ್ನ ನಿರೀಕ್ಷೆಯನ್ನು ಕಿತ್ತುಹಾಕಿದ್ದಾರೆ.</verse>
				<verse number="11">ದೇವರ ಶಿಕ್ಷೆಯು ನನ್ನ ಮೇಲೆ ಉರಿಯುತ್ತಿದೆ; ನಾನು ದೇವರಿಗೆ ವೈರಿಯಂತೆ ಪರಿಗಣಿಸಲಾಗಿದ್ದೇನೆ.</verse>
				<verse number="12">ದೇವರ ಸೇನೆ ಒಟ್ಟಿಗೆ ಬಂದು, ನನಗೆ ವಿರೋಧವಾಗಿ ದಿಬ್ಬನ್ನು ಕಟ್ಟಿ, ನನ್ನ ಗುಡಾರದ ಸುತ್ತಲೂ ಇಳಿದಿವೆ.</verse>
				<verse number="13">“ದೇವರು ನನ್ನ ಕುಟುಂಬದವರನ್ನು ನನ್ನಿಂದ ಅಗಲಿಸಿದ್ದಾರೆ; ನನ್ನ ಪರಿಚಿತರೆಲ್ಲರೂ ನನ್ನನ್ನು ತೊರೆದಿದ್ದಾರೆ.</verse>
				<verse number="14">ನನ್ನ ಬಂಧುಗಳು ನನ್ನನ್ನು ಕೈಬಿಟ್ಟಿದ್ದಾರೆ; ನನ್ನ ಆಪ್ತ ಸ್ನೇಹಿತರು ನನ್ನನ್ನು ಮರೆತುಬಿಟ್ಟಿದ್ದಾರೆ.</verse>
				<verse number="15">ನನ್ನ ಅತಿಥಿಗಳು, ನನ್ನ ದಾಸದಾಸಿಯರೂ ನನ್ನನ್ನು ಅನ್ಯನೆಂದು ಎಣಿಸುತ್ತಾರೆ; ಅವರ ದೃಷ್ಟಿಯಲ್ಲಿ ನಾನು ಪರದೇಶದವನ ಹಾಗೆ ಇದ್ದೇನೆ.</verse>
				<verse number="16">ನನ್ನ ಸೇವಕನನ್ನು ಕರೆದರೂ, ಅವನು ನನಗೆ ಉತ್ತರ ಕೊಡುವುದಿಲ್ಲ; ನನ್ನ ಬಾಯಿತೆರೆದು ಅವನನ್ನು ಬೇಡಿಕೊಂಡರೂ ಅವನು ಬರುವುದಿಲ್ಲ.</verse>
				<verse number="17">ನನ್ನ ಶ್ವಾಸವು ನನ್ನ ಹೆಂಡತಿಗೆ ಅಸಹ್ಯವಾಗಿದೆ, ನನ್ನ ಕುಟುಂಬದವರಿಗೆ ನಾನು ಹೇಸಿಕೆಯಾದೆ.</verse>
				<verse number="18">ಚಿಕ್ಕವರೂ ಸಹ ನನ್ನನ್ನು ತಿರಸ್ಕರಿಸುತ್ತಾರೆ; ನಾನು ಕಾಣಿಸಿಕೊಂಡಾಗ ನನ್ನನ್ನು ಹಾಸ್ಯಮಾಡುತ್ತಾರೆ.</verse>
				<verse number="19">ನನ್ನ ಆಪ್ತ ಸ್ನೇಹಿತರೆಲ್ಲಾ ನನ್ನನ್ನು ಕಂಡು ಅಸಹ್ಯಪಡುತ್ತಾರೆ; ನಾನು ಪ್ರೀತಿ ಮಾಡಿದವರೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.</verse>
				<verse number="20">ನಾನು ಕೇವಲ ಎಲುಬೂ ತೊಗಲೂ ಆಗಿಬಿಟ್ಟಿದ್ದೇನೆ; ನಾನು ನನ್ನ ಹಲ್ಲು ಚರ್ಮದಿಂದಲೇ ತಪ್ಪಿಸಿಕೊಂಡೆನು.</verse>
				<verse number="21">“ಕನಿಕರಿಸಿರಿ, ನನ್ನ ಸ್ನೇಹಿತರೇ, ನನ್ನನ್ನು ಕನಿಕರಿಸಿರಿ, ಏಕೆಂದರೆ ದೇವರ ಕೈ ನನ್ನನ್ನು ದಂಡಿಸಿದೆ.</verse>
				<verse number="22">ದೇವರಂತೆ ನೀವು ನನ್ನನ್ನು ಏಕೆ ಹಿಂಸಿಸುತ್ತೀರಿ? ನನಗೆ ತೊಂದರೆಪಡಿಸಿದ್ದು ಸಾಲದೋ?</verse>
				<verse number="23">“ಆಹಾ, ನನ್ನ ಮಾತುಗಳು ದಾಖಲಿಸಿದ್ದರೆ, ಆ ಮಾತುಗಳನ್ನು ಸುರುಳಿಗಳಲ್ಲಿ ಬರೆದಿದ್ದರೆ,</verse>
				<verse number="24">ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸೆ ಎರೆದು ಅವುಗಳನ್ನು ಶಾಶ್ವತ ಶಾಸನವಾಗಿ ಮಾಡಿದ್ದರೆ ಎಷ್ಟೋ ಒಳಿತು!</verse>
				<verse number="25">ನನ್ನ ವಿಮೋಚಕರು ಜೀವಿಸುತ್ತಿದ್ದಾರೆ ಎಂದು ತಿಳಿದಿದ್ದೇನೆ. ಕಡೆಯ ದಿನದಲ್ಲಿ ಭೂಮಿಯ ಮೇಲೆ ನನ್ನ ವಿಮೋಚಕರು ಬಂದು ನಿಲ್ಲುವರೆಂದೂ ತಿಳಿದಿದ್ದೇನೆ.</verse>
				<verse number="26">ನನ್ನ ಚರ್ಮವು ಬಿರಿದು ಹಾಳಾದ ಬಳಿಕವೂ, ನಾನು ದೇಹದಾರಿಯಾಗಿಯೇ ದೇವರನ್ನು ನೋಡುವೆನು.</verse>
				<verse number="27">ದೇವರನ್ನು ನಾನೇ ನೋಡುವೆನು; ಬೇರೆಯವರಲ್ಲ, ನನ್ನ ಕಣ್ಣಾರೆ ಅವರನ್ನು ಕಾಣುವೆನು; ಅದಕ್ಕಾಗಿ ನನ್ನ ಹೃದಯವು ನನ್ನೊಳಗೆ ಹಂಬಲಿಕೆಯಿಂದ ಹಾರೈಸುತ್ತಿದೆ!</verse>
				<verse number="28">“ ‘ಸ್ನೇಹಿತರೇ, ಅವನ ದುರ್ಗತಿಗೆ ಕಾರಣ ಅವನಲ್ಲಿಯೇ ಇದೆ, ನಾವು ಅವನಿಗೆ ಹೇಗೆ ತೊಂದರೆಕೊಡೋಣ?’ ಎಂದು ನೀವು ಹೇಳಿದರೆ,</verse>
				<verse number="29">ನೀವು ಖಡ್ಗಕ್ಕೆ ಭಯಪಡಬೇಕಾಗುತ್ತದೆ; ಏಕೆಂದರೆ, ಕ್ರೋಧವು ದಂಡನೆಯನ್ನು ಖಡ್ಗದಿಂದ ತರುವುದು. ಆಗ ನ್ಯಾಯತೀರ್ಪು ಉಂಟೆಂದು ನಿಮಗೆ ತಿಳಿಯುವುದು.”</verse>
			</chapter>
			<chapter number="20">
				<verse number="1">ನಾಮಾಥ್ಯನಾದ ಚೋಫರನು ಉತ್ತರಕೊಟ್ಟು ಹೇಳಿದ್ದೇನೆಂದರೆ:</verse>
				<verse number="2">“ನಾನು ತುಂಬಾ ಕಳವಳಗೊಂಡದ್ದರಿಂದ, ನನ್ನ ಆಲೋಚನೆಗಳು ನನ್ನನ್ನು ಉತ್ತರಿಸಲು ಪ್ರೇರೇಪಿಸಿದವು.</verse>
				<verse number="3">ನನ್ನನ್ನು ಅವಮಾನಿಸುವ ಖಂಡನೆಯನ್ನು ನಾನು ಕೇಳಿದ್ದೇನೆ; ಆದ್ದರಿಂದ ನನ್ನ ತಿಳುವಳಿಕೆಯು ನನ್ನನ್ನು ಉತ್ತರಿಸಲು ಪ್ರೇರೇಪಿಸುತ್ತದೆ.</verse>
				<verse number="4">“ದೇವರು ಮನುಷ್ಯನನ್ನು ಭೂಮಿಯಲ್ಲಿ ಇರಿಸಿದ ಕಾಲದಿಂದ ವಿಷಯ ಹೇಗಿದೆ ಎಂಬುದು ನಿನಗೆ ನಿಶ್ಚಯವಾಗಿ ಗೊತ್ತಿದೆ.</verse>
				<verse number="5">ದುಷ್ಟರ ಜಯವು ಅಲ್ಪ ಕಾಲ, ಭಕ್ತಿಹೀನರ ಸಂತೋಷವು ಕ್ಷಣ ಮಾತ್ರ.</verse>
				<verse number="6">ಹೆಮ್ಮೆಯು ಆಕಾಶಕ್ಕೆ ಏರಿದರೂ, ಅವನ ತಲೆ ಮೇಘಕ್ಕೆ ಮುಟ್ಟಿದರೂ,</verse>
				<verse number="7">ಗೊಬ್ಬರದ ಹಾಗೆ ಶಾಶ್ವತವಾಗಿ ಅವನು ನಾಶವಾಗುವನು; ಅವನನ್ನು ನೋಡಿದವರು, ‘ಅವನೆಲ್ಲಿ?’ ಎಂದು ಕೇಳುವರು.</verse>
				<verse number="8">ಭಕ್ತಿಹೀನನು ಕನಸಿನ ಹಾಗೆ ಹಾರಿಹೋಗುವನು, ಇನ್ನೆಂದಿಗೂ ಸಿಗಲಾರನು; ಅವನು ಕತ್ತಲೆಯ ಹಾಗೆ ಕಾಣದೆ ಹೋಗುವನು.</verse>
				<verse number="9">ಅವನನ್ನು ನೋಡಿದವರು ಇನ್ನು ಮುಂದೆ ನೋಡರು; ಅವನ ಸ್ಥಳವು ಇನ್ನು ಅವನನ್ನು ಕಾಣದು.</verse>
				<verse number="10">ಅವನ ಮಕ್ಕಳು ಬಡವರ ದಯೆಯನ್ನು ಬೇಡುವರು; ಅವನ ಮಕ್ಕಳ ಕೈಗಳು ಅವನ ಸಂಪತ್ತನ್ನು ಹಿಂತಿರುಗಿಸಬೇಕಾಗುವುದು.</verse>
				<verse number="11">ಅವನ ಎಲುಬುಗಳು ಯೌವನದ ಶಕ್ತಿಯಿಂದ ತುಂಬಿತ್ತು, ಅದು ಅವನ ಸಂಗಡ ಧೂಳಿನಲ್ಲಿ ಮಲಗುವುದು.</verse>
				<verse number="12">“ಅವನ ಕೆಟ್ಟತನವು ಬಾಯಿಗೆ ಸಿಹಿಯಾಗಿತ್ತು, ಅವನು ನಾಲಿಗೆಯ ಕೆಳಗೆ ಅದನ್ನು ಬಚ್ಚಿಟ್ಟುಕೊಂಡಿದ್ದನು.</verse>
				<verse number="13">ಅದನ್ನು ಬಿಟ್ಟುಕೊಡಲು ಇಷ್ಟಪಡದೆ, ತನ್ನ ಬಾಯಿಯೊಳಗೆ ದೀರ್ಘಸಮಯ ಇಟ್ಟುಕೊಂಡರೂ,</verse>
				<verse number="14">ಅವನ ಆಹಾರವು ಅವನ ಕರುಳಲ್ಲಿ ಹುಳಿಯಾಗಿ, ಅದು ಅವನೊಳಗಿನ ಸರ್ಪಗಳ ವಿಷವಾಗುವುದು.</verse>
				<verse number="15">ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡಿಸಿ ಬಿಡುವನು.</verse>
				<verse number="16">ಅವನು ಸರ್ಪಗಳ ವಿಷವನ್ನು ಹೀರುವನು; ಹಾವಿನ ನಾಲಿಗೆ ಅವನನ್ನು ಕೊಲ್ಲುವುದು.</verse>
				<verse number="17">ಅವನು ಜೇನು, ಮೊಸರೂ ಹರಿಯುವ ಹಳ್ಳಗಳನ್ನೂ, ಸಮೃದ್ಧಿಯಾಗಿ ಹರಿಯುವ ನದಿಗಳನ್ನೂ ನೋಡನು.</verse>
				<verse number="18">ಅವನು ತನ್ನ ಪ್ರಯಾಸದ ಫಲವನ್ನು ಸವಿಯದೆ ಪರರಿಗೆ ಕೊಡಬೇಕಾಗುವುದು; ಅವನು ತಾನು ಪಡೆದ ಲಾಭದ ಆನಂದವನ್ನು ಅನುಭವಿಸುವುದಿಲ್ಲ.</verse>
				<verse number="19">ಏಕೆಂದರೆ ಅವನು ಬಡವರನ್ನು ಜಜ್ಜಿ ಅವರನ್ನು ನಿರ್ಗತಿಕರನ್ನಾಗಿ ಮಾಡಿದನು; ತಾನು ನಿರ್ಮಿಸದ ಮನೆಗಳನ್ನು ವಶಪಡಿಸಿಕೊಂಡಿದ್ದಾನೆ.</verse>
				<verse number="20">“ಖಂಡಿತವಾಗಿ ಅವನ ಆಕಾಂಕ್ಷೆಗೆ ತೃಪ್ತಿ ಇರುವುದಿಲ್ಲ; ಅವನು ತನ್ನ ಇಷ್ಟ ಸಂಪತ್ತಿನಲ್ಲಿ ಏನೂ ಉಳಿಸಿಕೊಳ್ಳುವುದಿಲ್ಲ.</verse>
				<verse number="21">ಅವನಿಗೆ ಆಹಾರವು ಉಳಿಯದು; ಆದ್ದರಿಂದ ಅವನ ಸಮೃದ್ಧಿಯು ಅಸ್ಥಿರವಾಗಿರುವುದು.</verse>
				<verse number="22">ಅವನ ಸಮೃದ್ಧಿಯಿಂದ ತುಂಬಿರುವಾಗಲೇ ಅವನಿಗೆ ಇಕ್ಕಟ್ಟಾಗುವುದು; ಘೋರ ದುಃಖವು ಅವನ ಮೇಲೆ ಬರುವುದು.</verse>
				<verse number="23">ಅವನ ಹೊಟ್ಟೆ ತುಂಬುವಾಗ, ದೇವದಂಡನೆ ಅವನ ಮೇಲೆ ಬರುವುದು; ಹೌದು, ದೇವದಂಡನೆಯು ಅವನ ಮೇಲೆ ಸುರಿಯುವುದು.</verse>
				<verse number="24">ಅವನು ಕಬ್ಬಿಣದ ಆಯುಧಕ್ಕೆ ತಪ್ಪಿಸಿಕೊಂಡು ಓಡಿಹೋದರೆ, ಕಂಚಿನ ಬಾಣ ಅವನನ್ನು ತಿವಿಯುವುದು.</verse>
				<verse number="25">ಅವನು ಆ ಬಾಣವನ್ನು ಎಳೆದರೆ, ಅದು ಬೆನ್ನಿನಿಂದ ಹೊರಡುವುದು; ಅವನ ಪಿತ್ತಕೋಶದಿಂದ ಅದರ ಮಿಂಚುವ ಮೊನೆ ಬರುವುದು; ಸಾವಿನ ಭಯವು ಅವನನ್ನೂ ಆವರಿಸುವುದು.</verse>
				<verse number="26">ಅವನ ನಿಕ್ಷೇಪಗಳಲ್ಲಿ ಅಂಧಕಾರವು ಪೂರ್ಣವಾಗಿ ಕವಿಯುವುದು; ಯಾರೂ ಹೊತ್ತಿಸದ ಬೆಂಕಿ ಅವನನ್ನು ದಹಿಸುವುದು; ಅವನ ಗುಡಾರದಲ್ಲಿ ಉಳಿದದ್ದೆಲ್ಲ ನಾಶವಾಗುವುದು.</verse>
				<verse number="27">ಆಕಾಶವು ಅವನ ಅಪರಾಧವನ್ನು ಪ್ರಕಟಿಸುವುದು; ಭೂಮಿಯು ಅವನಿಗೆ ವಿರೋಧವಾಗಿ ಏಳುವುದು.</verse>
				<verse number="28">ಅವನ ಮನೆಯ ಧನಧಾನ್ಯವು ತೊಲಗಿ ಹೋಗುವುದು; ದೇವದಂಡನೆಯ ದಿನದಲ್ಲಿ ಅದು ಪ್ರವಾಹದಿಂದ ಕೊಚ್ಚಿಕೊಂಡು ಹೋಗುವುದು.</verse>
				<verse number="29">ದುಷ್ಟನಿಗೆ ದೇವರಿಂದ ಬರುವ ಪಾಲೂ, ಅವನಿಗೆ ನೇಮವಾಗಿರುವ ಬಾಧ್ಯತೆಯೂ ಇವೇ.”</verse>
			</chapter>
			<chapter number="21">
				<verse number="1">ಯೋಬನು ಉತ್ತರಕೊಟ್ಟು ಹೇಳಿದ್ದೇನೆಂದರೆ:</verse>
				<verse number="2">“ನನ್ನ ಮಾತನ್ನು ಲಕ್ಷ್ಯವಿಟ್ಟು ಕೇಳಿರಿ, ಇವು ನೀವು ನನಗೆ ನೀಡುವ ಆದರಣೆಗಳಾಗಿರಲಿ.</verse>
				<verse number="3">ನಾನು ಮಾತನಾಡುವಾಗ, ನನ್ನನ್ನು ಸಹಿಸಿಕೊಳ್ಳಿರಿ; ನಾನು ಮಾತನಾಡಿದ ಮೇಲೆ ನೀವು ಪರಿಹಾಸ್ಯ ಮಾಡಬಹುದು.</verse>
				<verse number="4">“ನಾನೇನು ಮನುಷ್ಯನ ವಿಷಯವಾಗಿ ದೂರು ಹೇಳುತ್ತಿದ್ದೇನೋ? ನಾನೇಕೆ ಬೇಸರಪಡಬಾರದು.</verse>
				<verse number="5">ನನ್ನ ಕಡೆಗೆ ಗಮನಿಸಿರಿ; ನೀವು ನಿಮ್ಮ ಬಾಯಿಯ ಮೇಲೆ ಕೈ ಇಟ್ಟು ಬೆರಗಾಗಿರಿ.</verse>
				<verse number="6">ನಾನು ಈ ವಿಷಯವನ್ನು ನೆನಪು ಮಾಡಿಕೊಂಡಾಗ ಭಯಪಡುತ್ತೇನೆ; ನನ್ನ ದೇಹಕ್ಕೆ ನಡುಕ ಹಿಡಿಯುತ್ತದೆ.</verse>
				<verse number="7">ದುಷ್ಟರು ವೃದ್ಧರಾಗುವವರೆಗೆ ಏಕೆ ಬದುಕುತ್ತಾರೆ? ಅಂಥವರು ಬಲಿಷ್ಠರಾಗಿ ಪ್ರಬಲಿಸುವುದಕ್ಕೂ ಕಾರಣವೇನು?</verse>
				<verse number="8">ಅವರೊಂದಿಗೆ ಅವರ ಸಂತಾನದವರು ಅವರ ಮುಂದೆ ಸುಸ್ಥಿರವಾಗುವುದನ್ನೂ, ಅವರ ಮಕ್ಕಳು ನೆಲೆಯಾಗಿರುವುದನ್ನೂ ನೋಡುವರು.</verse>
				<verse number="9">ಅವರ ಮನೆ ಸುರಕ್ಷಿತವಾಗಿ ನಿರ್ಭಯದಿಂದಿರುವುದು; ದೇವರ ದಂಡನೆಯ ಕೋಲು ಅವರ ಮೇಲೆ ಬೀಳದಿರುವುದು.</verse>
				<verse number="10">ಅವರ ಹೋರಿಯು ಅಭಿವೃದ್ಧಿಯಾಗಿರುವುದು; ಅವರ ಆಕಳು ತಪ್ಪದೆ ಈಯುವುದು.</verse>
				<verse number="11">ಅವರ ಮಕ್ಕಳು ಮಂದೆಯಾಗಿ ಹೊರನಡೆಯುತ್ತಾರೆ; ಅವರ ಚಿಕ್ಕವರು ಕುಣಿದಾಡುತ್ತಾ ಹೋಗುತ್ತಾರೆ.</verse>
				<verse number="12">ಅವರು ದಮ್ಮಡಿಯಿಂದಲೂ, ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ.</verse>
				<verse number="13">ಅವರು ಸಂಪತ್ತಿನಲ್ಲಿ ತಮ್ಮ ದಿನಗಳನ್ನು ಕಳೆಯುತ್ತಾರೆ; ಕೊನೆಗೆ ಸಮಾಧಾನದಿಂದ ಸಮಾಧಿಗೆ ಸೇರುತ್ತಾರೆ.</verse>
				<verse number="14">ಆದರೂ ಇವರು ದೇವರಿಗೆ, ‘ನಮ್ಮನ್ನು ಬಿಟ್ಟುಬಿಡು, ನಿಮ್ಮ ಮಾರ್ಗಗಳ ತಿಳುವಳಿಕೆ ನಮಗೆ ಬೇಡ.</verse>
				<verse number="15">ಸರ್ವಶಕ್ತರು ಯಾರು, ನಾವು ಅವರ ಸೇವೆ ಏಕೆ ಮಾಡಬೇಕು? ನಾವು ದೇವರಿಗೆ ಪ್ರಾರ್ಥನೆಮಾಡಿ ನಮಗೆ ಪ್ರಯೋಜನವೇನು?’ ಎಂದಿದ್ದಾರೆ.</verse>
				<verse number="16">ಆದರೆ ಅವರ ಸುಖವು ಅವರ ಕೈಯಲ್ಲಿ ಇಲ್ಲ; ಆದ್ದರಿಂದ ಆ ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ.</verse>
				<verse number="17">“ಆದರೂ ಎಷ್ಟು ಸಾರಿ ದುಷ್ಟರ ದೀಪವು ಆರಿಹೋಗುತ್ತದೆ? ಎಷ್ಟು ಸಾರಿ ವಿಪತ್ತು ಅವರ ಮೇಲೆ ಬರುತ್ತದೆ? ದೇವರು ವೇದನೆಗಳನ್ನು ತಮ್ಮ ಬೇಸರದಿಂದ ಹಂಚುವುದು ಎಷ್ಟು ಸಾರಿ?</verse>
				<verse number="18">ಅವರು ಗಾಳಿಯ ಮುಂದೆ ಹುಲ್ಲಿನ ಹಾಗೆ ಆದದ್ದು ಎಷ್ಟು ಸಾರಿ? ಬಿರುಗಾಳಿಯು ಹೊಡಕೊಂಡು ಹೋಗುವ ಹೊಟ್ಟಿನ ಹಾಗೆ ಕೊಚ್ಚಿಕೊಂಡು ಹೋದದ್ದು ಎಷ್ಟು ಸಾರಿ?</verse>
				<verse number="19">‘ದೇವರು ದುಷ್ಟರ ಮಕ್ಕಳಿಗೆ ಅವರ ಅಪರಾಧ ಫಲವನ್ನು ಕಾದಿಡುತ್ತಾರೆ,’ ಎಂದು ಹೇಳುತ್ತಾರಲ್ಲಾ? ಆ ದುಷ್ಟರು ಅನುಭವಿಸುವ ಹಾಗೆ ದೇವರು ಅವನಿಗೆ ಮುಯ್ಯಿಗೆ ಮುಯ್ಯಿ ತೀರಿಸಲಿ.</verse>
				<verse number="20">ದುಷ್ಟರು ತಮ್ಮ ವಿನಾಶವನ್ನು ತಾವಾಗಿಯೇ ನೋಡಲಿ; ಸರ್ವಶಕ್ತರ ದಂಡನೆಯನ್ನು ಅವನು ಅನುಭವಿಸಲಿ.</verse>
				<verse number="21">ದುಷ್ಟರಿಗೆ ನೇಮಕವಾದ ತಿಂಗಳುಗಳು ಮುಗಿದು ಹೋದ ಮೇಲೆ ತಾವು ಬಿಟ್ಟುಹೋಗುವ ಕುಟುಂಬದವರ ಚಿಂತೆ ಅವರಿಗೆ ಎಲ್ಲಿ?</verse>
				<verse number="22">“ದೇವರಿಗೆ ಅರಿವನ್ನು ಬೋಧಿಸಬಹುದೇ? ಉನ್ನತರಿಗೂ ನ್ಯಾಯತೀರಿಸುವುದು ದೇವರೇ ಅಲ್ಲವೇ?</verse>
				<verse number="23">ಒಬ್ಬ ವ್ಯಕ್ತಿಯು ಸುಖವಾಗಿಯೂ, ಸಮೃದ್ಧನಾಗಿಯೂ, ನೆಮ್ಮದಿಯಿಂದ ಇರುವಾಗಲೂ ಸಾಯುತ್ತಾನೆ.</verse>
				<verse number="24">ಅವನ ದೇಹ ಚೆನ್ನಾಗಿ ಬೆಳೆದು ಪೋಷಣೆಯಾಗಿರುತ್ತದೆ; ಅವನ ಎಲುಬುಗಳು ಮಜ್ಜೆಯಿಂದ ತುಂಬಿರುತ್ತದೆ.</verse>
				<verse number="25">ಮತ್ತೊಬ್ಬನು ಎಂದಿಗೂ ಒಳ್ಳೆಯದನ್ನು ಅನುಭವಿಸದೆ, ಕಹಿಯಾದ ಮನೋವ್ಯಥೆಪಡುತ್ತಾ ಸಾಯುತ್ತಾನೆ.</verse>
				<verse number="26">ಇವರಿಬ್ಬರೂ ಮಣ್ಣಿಗೆ ಸೇರುತ್ತಾರೆ; ಹುಳುಗಳು ಅವರನ್ನು ಮುತ್ತಿಕೊಳ್ಳುತ್ತವೆ.</verse>
				<verse number="27">“ನೋಡಿರಿ, ನಿಮ್ಮ ಆಲೋಚನೆಗಳನ್ನು ನಾನು ಬಲ್ಲೆನು. ನೀವು ನನಗೆ ವಿರೋಧವಾಗಿ ಮಾಡುವ ಕುಯುಕ್ತಿಗಳನ್ನೂ ತಿಳಿದಿದ್ದೇನೆ.</verse>
				<verse number="28">ನೀವು, ‘ಪ್ರಧಾನನ ಮನೆ ಈಗ ಎಲ್ಲಿದೆ? ದುಷ್ಟರು ವಾಸಿಸಿದ ಗುಡಾರ ಎಲ್ಲಿ?’ ಎನ್ನುತ್ತೀರಿ.</verse>
				<verse number="29">ಮಾರ್ಗದಲ್ಲಿ ಹಾದು ಹೋಗುವವರನ್ನು ನೀವು ವಿಚಾರಿಸಲಿಲ್ಲವೋ? ಅವರ ಅನುಭವಗಳು ನಿಮಗೆ ಹಿಡಿಸಲಿಲ್ಲವೋ?</verse>
				<verse number="30">ಹೀಗೆ ಆಪತ್ತಿನ ದಿನ ದುಷ್ಟರು ತಪ್ಪಿಸಿಕೊಳ್ಳುತ್ತಾರೆ; ದೇವರ ದಂಡನೆಯ ದಿನದಲ್ಲಿ ಅವರು ಬಿಡುಗಡೆಯಾಗುತ್ತಾರೆ.</verse>
				<verse number="31">ದುಷ್ಟರ ಮಾರ್ಗವನ್ನು ಮುಖಾಮುಖಿಯಾಗಿ ಅವರಿಗೆ ತೋರಿಸುವವರು ಯಾರು? ಅವರು ಮಾಡಿದ ದುಷ್ಕೃತ್ಯಗಳಿಗೆ ಮುಯ್ಯಿ ತೀರಿಸುವವರು ಯಾರು?</verse>
				<verse number="32">ದುಷ್ಟರನ್ನು ಸಮಾಧಿಗೆ ಒಯ್ಯುತ್ತಾರೆ. ಅವರ ಗೋರಿಗೆ ಕಾವಲು ಇಡುತ್ತಾರೆ.</verse>
				<verse number="33">ಕಣಿವೆಯಲ್ಲಿನ ಮಣ್ಣು ಅವರಿಗೆ ಸಿಹಿಯಾಗಿರುತ್ತದೆ; ಪ್ರತಿಯೊಬ್ಬರೂ ಅವರನ್ನು ಹಿಂಬಾಲಿಸುತ್ತಾರೆ. ಹೀಗೆ ಅವರನ್ನು ಲೆಕ್ಕವಿಲ್ಲದಷ್ಟು ಜನರು ಹಿಂಬಾಲಿಸುತ್ತಾರೆ.</verse>
				<verse number="34">“ವ್ಯರ್ಥವಾದ ನಿಮ್ಮ ಮಾತುಗಳಿಂದ ನೀವು ನನ್ನನ್ನು ಸಂತೈಸುವುದು ಹೇಗೆ? ನಿಮ್ಮ ಉತ್ತರಗಳಲ್ಲಿ ವಿಶ್ವಾಸದ್ರೋಹ ಬಿಟ್ಟು ಮತ್ತೇನೂ ಉಳಿದಿರುವುದಿಲ್ಲ.”</verse>
			</chapter>
			<chapter number="22">
				<verse number="1">ಆಮೇಲೆ ತೇಮಾನ್ಯನಾದ ಎಲೀಫಜನು ಹೀಗೆಂದನು:</verse>
				<verse number="2">“ಮನುಷ್ಯನಿಂದ ದೇವರಿಗೆ ಪ್ರಯೋಜನವೇನು? ಒಬ್ಬನು ಜ್ಞಾನಿಯಾಗಿದ್ದರೂ ದೇವರಿಗೆ ಪ್ರಯೋಜನವಾಗಿರುವನೇ?</verse>
				<verse number="3">ನೀನು ನೀತಿವಂತನಾಗಿದ್ದರೆ, ಸರ್ವಶಕ್ತರಿಗೆ ಮೆಚ್ಚಿಕೆಯೋ? ನಿನ್ನ ಮಾರ್ಗಗಳು ನಿರ್ದೋಷವಾಗಿದ್ದರೆ, ದೇವರಿಗೆ ಲಾಭವೇನು?</verse>
				<verse number="4">“ನಿನ್ನ ಭಕ್ತಿಗಾಗಿ ದೇವರು ನಿನ್ನನ್ನು ಗದರಿಸುತ್ತಾರೋ? ನಿನ್ನ ಭಕ್ತಿಗಾಗಿ ದೇವರು ನ್ಯಾಯತೀರ್ಪಿಗೆ ಗುರಿಪಡಿಸುತ್ತಾರೆಯೇ?</verse>
				<verse number="5">ನಿನ್ನ ದುಷ್ಟತನವು ಬಹಳವಲ್ಲವೋ? ನಿನ್ನ ಪಾಪಗಳಿಗೆ ಅಂತ್ಯವೇ ಇಲ್ಲಾ.</verse>
				<verse number="6">ನೀನು ಕಾರಣವಿಲ್ಲದೆ ನಿನ್ನ ಸಹೋದರರಿಂದ ಈಡು ತೆಗೆದುಕೊಂಡಿದ್ದೀ; ಅವರ ವಸ್ತ್ರಗಳನ್ನು ಸಹ ನೀನು ಕಿತ್ತುಕೊಂಡಿರುವೆ.</verse>
				<verse number="7">ನೀನು ದಣಿದವರಿಗೆ ನೀರು ಕೊಡಲಿಲ್ಲ; ಹಸಿದವರಿಗೆ ಆಹಾರವನ್ನು ಬಡಿಸಲಿಲ್ಲ.</verse>
				<verse number="8">ನೀನು ಬಲಿಷ್ಠನಾಗಿದ್ದರೂ, ಜಮೀನು ಬಹಳವಾಗಿದ್ದರೂ, ಗೌರವಕ್ಕೆ ಯೋಗ್ಯನಾದ ಮನುಷ್ಯನಾಗಿ ಊರಲ್ಲಿ ವಾಸಿಸಿದರೂ,</verse>
				<verse number="9">ವಿಧವೆಯರನ್ನು ಬರಿದಾಗಿ ಕಳುಹಿಸಿಬಿಟ್ಟೆ; ದಿಕ್ಕಿಲ್ಲದವರ ತೋಳುಗಳನ್ನು ಮುರಿದುಬಿಟ್ಟೆ.</verse>
				<verse number="10">ಆದ್ದರಿಂದ ನಿನ್ನ ಸುತ್ತಲೂ ಉರುಲುಗಳು ಕಾದಿವೆ; ಹಠಾತ್ತಾಗಿ ಬರುವ ವಿಪತ್ತು ನಿನ್ನನ್ನು ತಲ್ಲಣಗೊಳಿಸುತ್ತದೆ.</verse>
				<verse number="11">ಇದಲ್ಲದೆ ನೀನು ಕಾಣದಷ್ಟು ಕತ್ತಲು ನಿನಗಿರುವುದು; ಜಲಪ್ರವಾಹವೂ ನಿನ್ನನ್ನು ಮುಳುಗಿಸುವುದು.</verse>
				<verse number="12">“ದೇವರು ಸ್ವರ್ಗದಲ್ಲಿ ಇದ್ದಾರಲ್ಲವೇ? ನಕ್ಷತ್ರಮಂಡಲವನ್ನು ನೋಡು, ಅವು ಎಷ್ಟು ಉನ್ನತ!</verse>
				<verse number="13">ನೀನಾದರೋ, ‘ದೇವರಿಗೆ ಏನು ಗೊತ್ತು? ಕಾರ್ಗತ್ತಲಿರುವಾಗ ದೇವರು ನ್ಯಾಯತೀರಿಸಲು ಸಾಧ್ಯವೇ?</verse>
				<verse number="14">ದಟ್ಟವಾದ ಮೋಡಗಳು ದೇವರಿಗೆ ಪರದೆಯ ಹಾಗಿರುವುದರಿಂದ ದೇವರು ನಮ್ಮನ್ನು ನೋಡಲು ಸಾಧ್ಯವಿಲ್ಲ. ದೇವರು ಆಕಾಶಮಂಡಲದ ಮೇಲ್ಗಡೆಯಲ್ಲಿ ನಡೆದಾಡುತ್ತಾರೆ,’ ಎಂದು ಹೇಳಿಕೊಂಡಿರುವೆ ಅಲ್ಲವೇ?</verse>
				<verse number="15">ದುಷ್ಟರು ಮೊದಲಿನಿಂದಲೂ ನಡೆದ ದಾರಿಯಲ್ಲಿ ನೀನು ನಡೆಯುವಿಯಾ?</verse>
				<verse number="16">ಅಕಾಲ ಮರಣವು ಅವರನ್ನು ಅಪಹರಿಸಿತು; ಅವರ ಅಡಿಪಾಯವು ಪ್ರವಾಹದಿಂದ ಕೊಚ್ಚಿಹೋಯಿತು.</verse>
				<verse number="17">ಅವರು ದೇವರಿಗೆ, ‘ನಮ್ಮಿಂದ ತೊಲಗಿಹೋಗು! ಸರ್ವಶಕ್ತ ನಮಗೇನು ಮಾಡಲು ಸಾಧ್ಯ?’ ಎಂದು ಹೇಳಿಕೊಳ್ಳುತ್ತಿದ್ದರು.</verse>
				<verse number="18">ಆದರೂ ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದ್ದರು. ಅಬ್ಬಾ, ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!</verse>
				<verse number="19">ನೀತಿವಂತರು ದುಷ್ಟರ ದುರ್ಗತಿಯನ್ನು ನೋಡಿ ಹಿಗ್ಗುವರು. ನಿರ್ದೋಷಿಗಳು ಹೀಗೆಂದು ದುಷ್ಟರನ್ನು ಅಣಕಿಸುವರು:</verse>
				<verse number="20">‘ನಮಗೆ ವಿರುದ್ಧವಾಗಿ ಎದ್ದವರು ಹಾಳಾಗಿ ಹೋದರು. ಅವರ ಸೊತ್ತನ್ನು ಬೆಂಕಿಯು ನಾಶಮಾಡಿತು!’</verse>
				<verse number="21">“ದೇವರಿಗೆ ಅಧೀನವಾಗಿ, ದೇವರೊಂದಿಗೆ ಸಮಾಧಾನದಿಂದಿರು; ಇದರಿಂದ ನಿನಗೆ ಸಮೃದ್ಧಿ ಬರುವುದು.</verse>
				<verse number="22">ದೇವರ ಬಾಯಿಂದಲೇ ಶಿಕ್ಷಣವನ್ನು ಸ್ವೀಕರಿಸು; ದೇವರ ಮಾತುಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.</verse>
				<verse number="23">ನಿನ್ನ ಗುಡಾರಗಳಿಂದ ದುಷ್ಟತ್ವವನ್ನು ದೂರಮಾಡಿ, ಸರ್ವಶಕ್ತರ ಕಡೆಗೆ ನೀನು ತಿರುಗಿಕೊಂಡರೆ, ನೀನು ಪುನಃಸ್ಥಾಪಿತವಾಗುವೆ.</verse>
				<verse number="24">ನೀನು ಬಂಗಾರವನ್ನು ಧೂಳಿನಂತೆಯೂ, ಓಫೀರ್ ದೇಶದ ಬಂಗಾರವನ್ನು ನದಿಯ ಕಲ್ಲುಗಳಂತೆಯೂ ಎಣಿಸು.</verse>
				<verse number="25">ಆಗ ಸರ್ವಶಕ್ತರು ನಿನಗೆ ಬಂಗಾರವಾಗಿರುವರು. ದೇವರು ನಿನಗೆ ಸಮೃದ್ಧಿಯಾದ ಬೆಳ್ಳಿಯೂ ಆಗಿರುವರು.</verse>
				<verse number="26">ನಿಶ್ಚಯವಾಗಿ ಸರ್ವಶಕ್ತರಲ್ಲಿ ನೀನು ಆನಂದಗೊಳ್ಳುವೆ. ನಿನ್ನ ಮುಖವನ್ನು ದೇವರ ಕಡೆಗೆ ಎತ್ತುವೆ.</verse>
				<verse number="27">ನೀನು ದೇವರಿಗೆ ಪ್ರಾರ್ಥನೆಮಾಡುವೆ, ನಿನ್ನ ಪ್ರಾರ್ಥನೆಯನ್ನು ದೇವರು ಕೇಳುವರು; ನೀನು ಮಾಡಿದ ಹರಕೆಗಳನ್ನು ಸಲ್ಲಿಸುವೆ.</verse>
				<verse number="28">ನೀನು ಏನಾದರೂ ನಿರ್ಣಯಿಸಿದ್ದರೆ, ಅದು ನಿನಗೆ ನೆರವೇರುವುದು ಮತ್ತು ಬೆಳಕು ನಿನ್ನ ಮಾರ್ಗಗಳಲ್ಲಿ ಪ್ರಕಾಶಿಸುವುದು.</verse>
				<verse number="29">ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, ‘ಮೇಲಕ್ಕೆ ಎತ್ತು!’ ಎಂದು ನೀನು ದೇವರಿಗೆ ಮೊರೆಯಿಡಲು, ದೇವರು ಬಿದ್ದವರನ್ನು ರಕ್ಷಿಸುವರು.</verse>
				<verse number="30">ನಿರ್ದೋಷಿಯಾಗಿ ಇಲ್ಲದವರನ್ನು ಸಹ ದೇವರು ವಿಮೋಚಿಸುತ್ತಾರೆ; ನಿನ್ನ ಕೈಗಳ ಶುದ್ಧತ್ವದಿಂದ ಅಂಥವರು ಬಿಡುಗಡೆಯಾಗುವರು.”</verse>
			</chapter>
			<chapter number="23">
				<verse number="1">ಯೋಬನು ಉತ್ತರಕೊಟ್ಟು ಹೇಳಿದ್ದೇನೆಂದರೆ:</verse>
				<verse number="2">“ಇಂದಿಗೂ ನನ್ನ ದೂರು ಕಹಿಯಾಗಿದೆ; ನಾನು ನಿಟ್ಟುಸಿರಿಟ್ಟರೂ ದೇವರ ಹಸ್ತವು ಭಾರವಾಗಿದೆ.</verse>
				<verse number="3">ದೇವರನ್ನು ಎಲ್ಲಿ ಕಂಡುಕೊಳ್ಳಬೇಕೆಂದು ನನಗೆ ತಿಳಿದಿದ್ದರೆ, ಎಷ್ಟೋ ಒಳ್ಳೆಯದು! ಸಾಧ್ಯವಾದರೆ ನಾನು ದೇವರು ವಾಸಿಸುವ ಸ್ಥಳದ ತನಕ ಹೋಗುತ್ತಿದ್ದೆ.</verse>
				<verse number="4">ನನ್ನ ನ್ಯಾಯವನ್ನು ದೇವರ ಮುಂದೆ ವಿವರಿಸುತ್ತಿದ್ದೆ; ನನ್ನ ಬಾಯನ್ನು ಪ್ರತಿವಾದಗಳಿಂದ ತುಂಬಿಸುತ್ತಿದ್ದೆ.</verse>
				<verse number="5">ದೇವರು ನನಗೆ ಉತ್ತರವಾಗಿ ಕೊಡುವ ಮಾತುಗಳನ್ನು ಕಂಡುಹಿಡಿದು, ದೇವರು ನನಗೆ ಹೇಳುವುದನ್ನು ಪರಿಗಣಿಸುತ್ತಿದ್ದೆ.</verse>
				<verse number="6">ದೇವರು ನನ್ನನ್ನು ಕಠಿಣವಾಗಿ ವಿರೋಧಿಸುತ್ತಾರೋ? ಇಲ್ಲ, ಖಂಡಿತವಾಗಿ ಅವರು ನನ್ನ ವಿರುದ್ಧ ಆರೋಪಗಳನ್ನು ಹೊರಿಸುವುದಿಲ್ಲ.</verse>
				<verse number="7">ದೇವರ ಸನ್ನಿಧಿಯಲ್ಲಿ ಯಥಾರ್ಥವಂತನು ತಾನು ನಿರಪರಾಧಿ ಎಂದು ದೃಢಪಡಿಸಲು ಸಾಧ್ಯ; ಅಲ್ಲಿ ನನಗೆ ನನ್ನ ನ್ಯಾಯಾಧಿಪತಿಯಿಂದ ಶಾಶ್ವತವಾಗಿ ಬಿಡುಗಡೆಯಾಗುವುದು.</verse>
				<verse number="8">“ಒಂದು ವೇಳೆ ನಾನು ಪೂರ್ವದೆಡೆಗೆ ಹೋದರೂ ದೇವರು ನನಗೆ ಕಾಣಿಸುವುದಿಲ್ಲ; ಪಶ್ಚಿಮದೆಡೆಗೆ ಹೋದರೂ ದೇವರು ಕಾಣಿಸುವುದಿಲ್ಲ.</verse>
				<verse number="9">ಉತ್ತರದಲ್ಲಿ ಹುಡುಕಿದರೂ ದೇವರನ್ನು ನೋಡಲಾರೆನು; ದಕ್ಷಿಣದೆಡೆಗೆ ತಿರುಗಿಕೊಂಡರೂ ದೇವರು ಕಾಣಿಸುವುದಿಲ್ಲ.</verse>
				<verse number="10">ಆದರೆ ದೇವರು ನಾನು ಹೋಗುವ ಮಾರ್ಗವನ್ನು ತಿಳಿದಿದ್ದಾರೆ; ದೇವರು ನನ್ನನ್ನು ಪರೀಕ್ಷಿಸಿದಾಗ, ನಾನು ಚೊಕ್ಕ ಬಂಗಾರವಾಗಿ ಹೊರಗೆ ಬರುವೆನು.</verse>
				<verse number="11">ನನ್ನ ಪಾದಗಳು ದೇವರ ಹೆಜ್ಜೆಯ ಜಾಡಿನಲ್ಲಿ ನಿಕಟವಾಗಿ ಅನುಸರಿಸಿವೆ; ದೇವರ ಮಾರ್ಗವನ್ನು ಬಿಟ್ಟು ನಾನು ತೊಲಗದಂತೆ ನೋಡಿಕೊಂಡೆನು.</verse>
				<verse number="12">ದೇವರ ತುಟಿಗಳ ಆಜ್ಞೆಯಿಂದ ನಾನು ಹಿಂಜರಿಯಲಿಲ್ಲ; ನನ್ನ ದೈನಂದಿನ ಆಹಾರಕ್ಕಿಂತ ದೇವರ ಬಾಯಿಯ ಮಾತುಗಳನ್ನು ನನ್ನೆದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.</verse>
				<verse number="13">“ಆದರೆ ದೇವರು ಬದಲಾಗದವರು; ದೇವರನ್ನು ಬದಲಾಯಿಸುವವರು ಯಾರು? ದೇವರು ತಾವು ಬಯಸಿದ್ದನ್ನು ಮಾಡುತ್ತಾರೆ.</verse>
				<verse number="14">ನನಗೆ ನೇಮಿಸಿದ್ದನ್ನು ದೇವರು ಈಡೇರಿಸುತ್ತಾರೆ. ಇಂಥ ಅನೇಕ ಯೋಜನೆಗಳು ದೇವರಲ್ಲಿವೆ.</verse>
				<verse number="15">ಆದ್ದರಿಂದ ನಾನು ದೇವರ ಮುಂದೆ ಗಾಬರಿಗೊಳ್ಳುತ್ತೇನೆ; ಇದನ್ನೆಲ್ಲಾ ಗ್ರಹಿಸಿಕೊಳ್ಳುವಾಗ ನಾನು ದೇವರಿಗೆ ಭಯಪಡುತ್ತೇನೆ.</verse>
				<verse number="16">ದೇವರು ನನ್ನ ಹೃದಯವನ್ನು ಹೆದರಿಸಿದ್ದಾರೆ; ಸರ್ವಶಕ್ತರು ನನ್ನನ್ನು ಗಾಬರಿಪಡಿಸಿದ್ದಾರೆ.</verse>
				<verse number="17">ಆದರೂ ನಾನು ಅಂಧಕಾರದಿಂದ ಮೌನವಾಗಲಿಲ್ಲ; ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲಿನ ನಿಮಿತ್ತ ನಾನು ಮಾತಾಡದೆ ಇರುವುದಿಲ್ಲ.</verse>
			</chapter>
			<chapter number="24">
				<verse number="1">“ಸರ್ವಶಕ್ತರು ತೀರ್ಪಿನ ಕಾಲವನ್ನು ನಿಗದಿಪಡಿಸದೆ ಇರುವುದೇಕೆ? ದೇವರನ್ನು ತಿಳಿದವರು ದೇವರ ದಿನಗಳಿಗೋಸ್ಕರ ವ್ಯರ್ಥವಾಗಿ ನೋಡುತ್ತಿರುವುದು ಏಕೆ?</verse>
				<verse number="2">ಕೆಲವರು ಗಡಿಗಳ ಕಲ್ಲುಗಳನ್ನು ಬದಲಿಸುತ್ತಾರೆ, ಕದ್ದ ಮಂದೆಗಳನ್ನು ತೆಗೆದುಕೊಂಡು ಸಾಕಿಕೊಳ್ಳುತ್ತಾರೆ.</verse>
				<verse number="3">ದಿಕ್ಕಿಲ್ಲದವರ ಕತ್ತೆಗಳನ್ನು ಹೊಡೆದುಕೊಂಡು ಹೋಗುತ್ತಾರೆ; ವಿಧವೆಯ ಎತ್ತನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.</verse>
				<verse number="4">ದರಿದ್ರನನ್ನು ದಾರಿಯಿಂದ ತೊಲಗಿಸುತ್ತಾರೆ; ದೇಶದ ಬಡವರು ಕೂಡ ಅವರಿಂದ ಓಡಿ ಅಡಗಿಕೊಳ್ಳುತ್ತಾರೆ.</verse>
				<verse number="5">ಕಾಡುಕತ್ತೆಗಳ ಹಾಗೆ ಬಡವರು ತಮ್ಮ ಆಹಾರಕ್ಕಾಗಿ ಅಲೆಯುತ್ತಾರೆ; ಪಾಳುಭೂಮಿಯಿಂದ ಅವರಿಗೂ, ಅವರ ಮಕ್ಕಳಿಗೂ ಆಹಾರ ಸಿಗುತ್ತದೆ.</verse>
				<verse number="6">ಬಡವರು ಹೊಲಗಳಲ್ಲಿ ಮೇವನ್ನು ಕೊಯ್ದು, ದುಷ್ಟನ ದ್ರಾಕ್ಷಿತೋಟದಲ್ಲಿ ಹಕ್ಕಲಾಯುತ್ತಾರೆ.</verse>
				<verse number="7">ಸಾಕಷ್ಟು ಬಟ್ಟೆ ಇಲ್ಲದೆ ಅವರು ರಾತ್ರಿಯನ್ನು ಕಳೆಯುತ್ತಾರೆ; ಚಳಿಯಲ್ಲಿ ಅವರಿಗೆ ಹೊದ್ದುಕೊಳ್ಳುವುದಕ್ಕೆ ಇಲ್ಲ.</verse>
				<verse number="8">ಬೆಟ್ಟಗಳ ಮಳೆಯಿಂದ ನೆನೆದುಹೋಗುತ್ತಾರೆ; ಬಂಡೆಗಳಲ್ಲಿ ಆಶ್ರಯವನ್ನು ಪಡೆಯುತ್ತಾರೆ.</verse>
				<verse number="9">ಆದರೆ ದುಷ್ಟರು ದಿಕ್ಕಿಲ್ಲದ ಶಿಶುವನ್ನು ತಾಯಿಯ ಎದೆಯಿಂದ ಕಸೆದುಕೊಳ್ಳುತ್ತಾರೆ; ಬಡವನ ಶಿಶುವನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.</verse>
				<verse number="10">ಬಡವರೋ ಸಾಕಷ್ಟು ಬಟ್ಟೆಯಿಲ್ಲದವರಾಗಿ ಅಲೆಯುತ್ತಾರೆ; ಹಸಿದವರಾಗಿ ಸಿವುಡುಗಳನ್ನು ಹೊರುತ್ತಾರೆ.</verse>
				<verse number="11">ಯಜಮಾನರ ಮಾಳಿಗೆಗಳ ಮೇಲೆ ಓಲಿವ್ ಎಣ್ಣೆಗಾಣಗಳನ್ನು ಆಡಿಸುತ್ತಾರೆ; ದಾಹಗೊಂಡೇ ದ್ರಾಕ್ಷೆಯ ತೊಟ್ಟಿಗಳಲ್ಲಿ ಕೆಲಸ ಮಾಡುತ್ತಾರೆ.</verse>
				<verse number="12">ಪಟ್ಟಣದೊಳಗಿಂದ ಮನುಷ್ಯರ ನರಳುವಿಕೆಯು ಜೋರಾಗುತ್ತದೆ; ಗಾಯಪಟ್ಟವರ ಪ್ರಾಣವು ಸಹಾಯಕ್ಕಾಗಿ ಕೂಗುತ್ತದೆ; ಆದರೂ ದೇವರು ಯಾರ ಮೇಲೆಯೂ ತಪ್ಪು ಹೊರಿಸುವುದಿಲ್ಲ.</verse>
				<verse number="13">“ಬೆಳಕಿನ ವಿರೋಧವಾಗಿ ತಿರುಗಿಬಿದ್ದವರು ಇದ್ದಾರೆ; ಅಂಥವರು ಬೆಳಕಿನ ಮಾರ್ಗಗಳನ್ನು ಅರಿಯದವರು; ಬೆಳಕಿನ ದಾರಿಗಳಲ್ಲಿ ವಾಸವಾಗಿರದವರೂ ಆಗಿದ್ದಾರೆ.</verse>
				<verse number="14">ಕೊಲೆಗಾರನು ಮುಂಜಾನೆಯೇ ಎದ್ದು, ದಿಕ್ಕಿಲ್ಲದವರನ್ನೂ, ಬಡವರನ್ನೂ ಸಂಹರಿಸುತ್ತಾನೆ; ರಾತ್ರಿಯಲ್ಲಿ ಕಳ್ಳನಂತೆ ವರ್ತಿಸುತ್ತಾನೆ.</verse>
				<verse number="15">ವ್ಯಭಿಚಾರಿಯು ಸಂಜೆಯನ್ನು ಎದುರುನೋಡುತ್ತಿರುವನು. ತರುವಾಯ, ‘ಯಾವ ಕಣ್ಣೂ ನನ್ನನ್ನು ನೋಡುವುದಿಲ್ಲ,’ ಎಂದು ಹೇಳುತ್ತಾನೆ; ಯಾರು ತನ್ನನ್ನು ಕಾಣದಂತೆ ಮುಖವನ್ನು ಮುಚ್ಚಿಕೊಳ್ಳುತ್ತಾನೆ.</verse>
				<verse number="16">ಕಳ್ಳರು ಕತ್ತಲಲ್ಲಿ ಕನ್ನ ಕೊರೆದು ಮನೆಗಳೊಳಗೆ ನುಗ್ಗುತ್ತಾರೆ. ಹಗಲಿನಲ್ಲಿ ತಮ್ಮ ಮನೆಬಾಗಿಲುಗಳನ್ನು ಮುಚ್ಚಿಕೊಳ್ಳುತ್ತಾರೆ; ಅವರು ಬೆಳಕಿನಲ್ಲಿ ಏನೂ ಮಾಡಲು ಬಯಸುವುದಿಲ್ಲ.</verse>
				<verse number="17">ಅವರೆಲ್ಲರಿಗೂ ಕಾರ್ಗತ್ತಲು ಬೆಳಕಿನಂತಿರುವುದು; ಕತ್ತಲೆಯ ಭೀತಿಯೇ ಅವರಿಗೆ ಸ್ನೇಹಿತರು.</verse>
				<verse number="18">“ಆದರೂ ಅವರು ನೀರಿನ ಮೇಲಿನ ಗುಳ್ಳೆಯಂತೆ ಇದ್ದಾರೆ. ಅವರ ಜಮೀನು ಶಾಪಕ್ಕೆ ಒಳಪಟ್ಟಿರುವುದರಿಂದ, ಯಾರೂ ಅವರ ದ್ರಾಕ್ಷೆಯ ತೋಟಕ್ಕೆ ಹೋಗುವುದಿಲ್ಲ.</verse>
				<verse number="19">ಬರಗಾಲದ ಬಿಸಿಲು ಹಿಮದ ನೀರನ್ನು ಹೀರಿಕೊಳ್ಳುವಂತೆ, ಪಾಪಮಾಡಿದವರನ್ನು ಸಮಾಧಿಯು ಹೀರಿಕೊಳ್ಳುತ್ತದೆ.</verse>
				<verse number="20">ಹೆತ್ತ ಕರುಳು ಅಂಥವರನ್ನು ಮರೆತು ಬಿಡುವುದು; ಹುಳವು ಅಂಥವರ ಹೆಣವನ್ನು ರುಚಿಯಿಂದ ತಿಂದುಬಿಡುವುದು; ಇನ್ನು ಅವರ ನೆನಪು ಇರುವುದಿಲ್ಲ; ಮರದ ಹಾಗೆ ದುಷ್ಟರು ಮುರಿದುಹೋಗುವರು.</verse>
				<verse number="21">ದುಷ್ಟರು ಆಸ್ತಿಯ ವಿಷಯದಲ್ಲಿ ಬಂಜೆಯರನ್ನು ಮೋಸಮಾಡುತ್ತಾನೆ; ದುಷ್ಟರು ವಿಧವೆಯರಿಗೆ ದಯೆ ತೋರಿಸುವುದಿಲ್ಲ.</verse>
				<verse number="22">ಆದರೆ ದೇವರು ತಮ್ಮ ಶಕ್ತಿಯಿಂದ ಬಲಿಷ್ಠರನ್ನು ಎಳೆದೊಯ್ಯುತ್ತಾರೆ; ಬಲಿಷ್ಠರು ಉದ್ಧಾರವಾಗಿದ್ದರೂ ಅವರಿಗೆ ಜೀವನದ ಭರವಸೆ ಇಲ್ಲ.</verse>
				<verse number="23">ಭದ್ರತೆಯಲ್ಲಿ ವಿಶ್ರಾಂತಿ ಪಡೆಯಲು ದೇವರು ಅವರಿಗೆ ಅವಕಾಶ ನೀಡಬಹುದು; ಆದರೆ ದೇವರ ಕಣ್ಣುಗಳು ಅವರ ಮಾರ್ಗಗಳ ಮೇಲಿರುವುದು.</verse>
				<verse number="24">ಅವರು ಸ್ವಲ್ಪಕಾಲ ಉನ್ನತವಾಗಿದ್ದು ನಂತರ ಇಲ್ಲದೆ ಹೋಗುತ್ತಾರೆ; ಅವರು ಎಲ್ಲಾ ಮನುಷ್ಯರಂತೆ ಕೊಯ್ದ ತೆನೆಯ ಹಾಗೆ ಕೆಳಗೆ ಬಿದ್ದು ಕಾಳಿನಂತೆ ಬೇರ್ಪಡುತ್ತಾರೆ.</verse>
				<verse number="25">“ಈ ಮಾತು ನಿಜ ಇಲ್ಲದಿದ್ದರೆ, ಯಾರು ನನ್ನನ್ನು ಸುಳ್ಳುಗಾರನನ್ನಾಗಿ ಸ್ಥಾಪಿಸಬಲ್ಲರು? ಯಾರು ನನ್ನ ಮಾತನ್ನು ವ್ಯರ್ಥಮಾಡಬಲ್ಲರು?”</verse>
			</chapter>
			<chapter number="25">
				<verse number="1">ಶೂಹ್ಯನಾದ ಬಿಲ್ದದನು ಉತ್ತರಕೊಟ್ಟು ಹೇಳಿದ್ದೇನೆಂದರೆ:</verse>
				<verse number="2">“ಅಧಿಕಾರ ಮತ್ತು ವಿಸ್ಮಯ ದೇವರಿಗೆ ಸೇರಿದೆ; ಉನ್ನತಲೋಕದಲ್ಲಿ ಸಮಾಧಾನವನ್ನು ಸ್ಥಾಪಿಸಿದವರು ದೇವರೇ.</verse>
				<verse number="3">ದೇವರ ಸೈನ್ಯಗಳಿಗೆ ಲೆಕ್ಕ ಉಂಟೋ? ಯಾರ ಮೇಲೆ ದೇವರ ಬೆಳಕು ಮೂಡುವುದಿಲ್ಲ?</verse>
				<verse number="4">ಮನುಷ್ಯನು ದೇವರ ಮುಂದೆ ನೀತಿವಂತನಾಗುವುದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ಪರಿಶುದ್ಧನಾಗಿರುವುದು ಹೇಗೆ?</verse>
				<verse number="5">ಇಗೋ, ಚಂದ್ರನೂ ಪ್ರಕಾಶಮಾನವಾಗಿರುವದಿಲ್ಲ; ನಕ್ಷತ್ರಗಳಾದರೂ ದೇವರ ದೃಷ್ಟಿಗೆ ಶುದ್ಧವಾದವುಗಳಲ್ಲ.</verse>
				<verse number="6">ಹೀಗಿರುವಲ್ಲಿ ಹುಳುವಿನಂಥ ಮನುಷ್ಯನು ದೇವರ ದೃಷ್ಟಿಯಲ್ಲಿ ಎಷ್ಟೋ ಕಡಿಮೆ! ಕ್ರಿಮಿಯಂಥ ಮನವರು ಎಷ್ಟೋ ಅಲ್ಪರು!”</verse>
			</chapter>
			<chapter number="26">
				<verse number="1">ಅದಕ್ಕೆ ಯೋಬನು ಹೀಗೆ ಉತ್ತರಕೊಟ್ಟನು:</verse>
				<verse number="2">“ಶಕ್ತಿ ಇಲ್ಲದವನಿಗೆ ನೀನು ಹೇಗೆ ಸಹಾಯ ಮಾಡಿದೆ? ತ್ರಾಣವಿಲ್ಲದ ಕೈಯನ್ನು ಹೇಗೆ ರಕ್ಷಿಸಿದೆ?</verse>
				<verse number="3">ಜ್ಞಾನವಿಲ್ಲದವನಿಗೆ ಏನು ಬುದ್ಧಿವಾದ ಹೇಳಿರುವೆ? ನೀನು ಯಾವ ವಿವೇಕದ ಮಾತುಗಳನ್ನು ಬಹಳವಾಗಿ ಪ್ರದರ್ಶಿಸಿದೆ.</verse>
				<verse number="4">ಈ ಮಾತುಗಳನ್ನು ಹೇಳಲು ನಿನಗೆ ಯಾರು ಸಹಾಯ ಮಾಡಿದರು? ಯಾರ ಆತ್ಮವು ನಿನ್ನ ಬಾಯಿಂದ ಮಾತಾಡಿದ್ದು?</verse>
				<verse number="5">“ಸಾಗರದ ಕೆಳಗಿನ ಲೋಕದಲ್ಲಿ ವಾಸಿಸುವ ಸತ್ತವರ ಆತ್ಮಗಳು ಆಳವಾದ ಯಾತನೆಯಲ್ಲಿವೆ.</verse>
				<verse number="6">ಪಾತಾಳವು ದೇವರ ದೃಷ್ಟಿಗೆ ತೆರೆದಿದೆ; ನಾಶಲೋಕವು ದೇವರಿಗೆ ಮರೆಯಾಗಿಲ್ಲ.</verse>
				<verse number="7">ದೇವರು ಉತ್ತರ ದಿಕ್ಕಿನ ಆಕಾಶವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾರೆ; ದೇವರು ಭೂಮಿಯನ್ನು ಏನೂ ಇಲ್ಲದರ ಮೇಲೆ ತೂಗು ಹಾಕಿದ್ದಾರೆ.</verse>
				<verse number="8">ತಮ್ಮ ಮೇಘಗಳಲ್ಲಿ ನೀರನ್ನು ತುಂಬಿ ಕಟ್ಟುತ್ತಾರೆ; ಆದರೂ ಮೋಡವು ಅದರ ಭಾರದಿಂದ ಒಡೆದುಹೋಗುವುದಿಲ್ಲ.</verse>
				<verse number="9">ದೇವರು ತಮ್ಮ ಪೂರ್ಣಚಂದ್ರ ಸಿಂಹಾಸನವನ್ನು ಮರೆಮಾಡುತ್ತಾರೆ. ಅದರ ಮುಂದೆ ಮೋಡವನ್ನು ಕವಿಸುತ್ತಾರೆ.</verse>
				<verse number="10">ಬೆಳಕು ಮತ್ತು ಕತ್ತಲುಗಳ ಸಂಧಿಸುವ ಸ್ಥಾನದಲ್ಲಿ, ಸಮುದ್ರದ ಮೇಲೆ ಸುತ್ತಲೂ ವೃತ್ತ ಮೇರೆಯನ್ನು ಹಾಕಿದ್ದಾರೆ.</verse>
				<verse number="11">ಆಕಾಶಮಂಡಲದ ಸ್ತಂಭಗಳು ಕಂಪಿಸುತ್ತವೆ; ದೇವರ ಗದರಿಕೆಗೆ ಅವು ಬೆರಗಾಗಿ ಕದಲುತ್ತವೆ.</verse>
				<verse number="12">ದೇವರು ತಮ್ಮ ಶಕ್ತಿಯಿಂದ ಸಮುದ್ರವನ್ನು ಕಲಕಿದ್ದಾರೆ; ದೇವರು ತಮ್ಮ ಜ್ಞಾನದಿಂದ ಘಟಸರ್ಪನಾದ ರಹಾಬನನ್ನು ಹೊಡೆದುಹಾಕುತ್ತಾರೆ.</verse>
				<verse number="13">ದೇವರ ಶ್ವಾಸದಿಂದ ಆಕಾಶಮಂಡಲವು ಶುಭ್ರವಾಗಿದೆ; ದೇವರು ಹಸ್ತವು ಹರಿದೋಡುವ ಸರ್ಪವನ್ನು ಇರಿಯುತ್ತದೆ.</verse>
				<verse number="14">ಇಗೋ, ಇವು ದೇವರ ಕಾರ್ಯಗಳಲ್ಲಿ ಕೆಲವು ಮಾತ್ರ; ದೇವರನ್ನು ಕುರಿತು ಪಿಸುಧ್ವನಿ ಮಾತ್ರ ಕೇಳಿದ್ದೇವೆ; ಹಾಗಾದರೆ, ದೇವರ ಪರಾಕ್ರಮದ ಗುಡುಗನ್ನು ಯಾರು ಗ್ರಹಿಸಿಕೊಳ್ಳುವರು?”</verse>
			</chapter>
			<chapter number="27">
				<verse number="1">ಯೋಬನು ಮತ್ತೆ ತನ್ನ ಚರ್ಚೆಯನ್ನು ಮುಂದುವರಿಸಿ ಹೇಳಿದ್ದೇನೆಂದರೆ:</verse>
				<verse number="2">ನನ್ನ ನ್ಯಾಯವನ್ನು ತಪ್ಪಿಸಿದ ಜೀವಂತ ದೇವರಾಣೆ, ನನ್ನ ಆತ್ಮವನ್ನು ವ್ಯಥೆಪಡಿಸಿರುವ ಸರ್ವಶಕ್ತರ ಆಣೆ,</verse>
				<verse number="3">“ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿದೆ; ದೇವರು ಊದಿದ ಶ್ವಾಸವು ನನ್ನ ಮೂಗಿನಲ್ಲಿ ಆಡುತ್ತಿದೆ.</verse>
				<verse number="4">ನನ್ನ ತುಟಿಗಳು ಸುಳ್ಳನ್ನು ನುಡಿಯುವುದೇ ಇಲ್ಲ. ನನ್ನ ನಾಲಿಗೆಯು ಎಷ್ಟು ಮಾತ್ರಕ್ಕೂ ಮೋಸದ ಮಾತುಗಳನ್ನಾಡುವುದಿಲ್ಲ.</verse>
				<verse number="5">ನೀವು ನ್ಯಾಯವಂತರೆಂದು ನಾನು ಒಪ್ಪುವುದಿಲ್ಲ; ನಾನು ಸಾಯುವ ತನಕ, ನನ್ನ ಪ್ರಾಮಾಣಿಕತ್ವವನ್ನು ಬಿಡುವುದಿಲ್ಲ.</verse>
				<verse number="6">ನನ್ನ ನಿಷ್ಕಪಟತೆಯನ್ನು ದೃಢವಾಗಿ ಹಿಡುಕೊಂಡಿದ್ದೇನೆ; ಅದನ್ನು ಎಂದಿಗೂ ನಾನು ಹೋಗಗೊಡಿಸುವುದಿಲ್ಲ; ನಾನು ಜೀವಂತವಾಗಿ ಇರುವವರೆಗೂ ನನ್ನ ಮನಸ್ಸಾಕ್ಷಿಯು ನನ್ನನ್ನು ನಿಂದಿಸುವುದಿಲ್ಲ.</verse>
				<verse number="7">“ನನ್ನ ಶತ್ರು ದುಷ್ಟನ ಹಾಗಿರಲಿ; ನನ್ನ ವಿರುದ್ಧ ಏಳುವವನು ಅನ್ಯಾಯವಂತನ ಹಾಗಿರಲಿ.</verse>
				<verse number="8">ದೇವರು ಭಕ್ತಿಹೀನನನ್ನು ಕಡಿದುಬಿಟ್ಟರೆ, ಅವನ ಪ್ರಾಣ ತೆಗೆದುಕೊಂಡರೆ, ಅವನಿಗೆ ನಿರೀಕ್ಷೆ ಎಲ್ಲಿ?</verse>
				<verse number="9">ಭಕ್ತಿಹೀನನಿಗೆ ಯಾತನೆ ಬಂದರೆ, ದೇವರು ಅವನ ಮೊರೆಯನ್ನು ಕೇಳುವರೋ?</verse>
				<verse number="10">ಭಕ್ತಿಹೀನನು ಸರ್ವಶಕ್ತರಲ್ಲಿ ಆನಂದವಾಗಿರುವನೋ? ಸರ್ವಕಾಲದಲ್ಲಿಯೂ ದೇವರನ್ನು ಕರೆಯುವನೋ?</verse>
				<verse number="11">“ನಾನು ದೇವರ ಶಕ್ತಿಯ ಬಗ್ಗೆ ನಿಮಗೆ ಬೋಧಿಸುವೆನು; ಸರ್ವಶಕ್ತರ ಮಾರ್ಗಗಳನ್ನು ನಾನು ಮರೆಮಾಡೆನು.</verse>
				<verse number="12">ನೀವೆಲ್ಲರೂ ಇದನ್ನು ನೋಡಿದ್ದರೂ, ಮತ್ತೆ ಏಕೆ ಈ ಪ್ರಕಾರ ವ್ಯರ್ಥವಾಗಿ ವಾದಿಸುತ್ತೀರಿ?</verse>
				<verse number="13">“ಇದು ದುಷ್ಟರಿಗೆ ದೇವರಿಂದ ಬಂದ ಪಾಲಾಗಿದೆ; ಹಿಂಸಕರಿಗೆ ಸರ್ವಶಕ್ತರಿಂದ ಹೊಂದುವ ಪಾಲು ಹೀಗಿರುತ್ತವೆ:</verse>
				<verse number="14">ಅವರ ಮಕ್ಕಳು ಹೆಚ್ಚಿದರೂ ಖಡ್ಗಕ್ಕೆ ಗುರಿಯಾಗುವರು; ಅವರ ಸಂತತಿಯವರಿಗೆ ಆಹಾರದ ಕೊರತೆ ಇರುವುದು.</verse>
				<verse number="15">ಅವರ ಮನೆಯಲ್ಲಿ ಯಾರಾದರೂ ಉಳಿದರೆ, ವ್ಯಾಧಿಯಿಂದ ಸತ್ತು ಸಮಾಧಿ ಸೇರುವರು; ಅವರ ವಿಧವೆಯರು ದುಃಖಕ್ರಿಯೆಗಳನ್ನು ನೆರವೇರಿಸುವುದಿಲ್ಲ.</verse>
				<verse number="16">ದುಷ್ಟರು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟಿದ್ದರೂ, ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿಕೊಂಡಿದ್ದರೂ,</verse>
				<verse number="17">ಅವರು ಕೂಡಿಸಿಟ್ಟಿದ್ದನ್ನು ನೀತಿವಂತರು ಹಂಚಿಕೊಳ್ಳುವರು; ಅವರ ಬೆಳ್ಳಿಯನ್ನು ನಿರ್ದೋಷಿಗಳು ಹಂಚಿಕೊಳ್ಳುವರು.</verse>
				<verse number="18">ದುಷ್ಟರು ಕಟ್ಟಿಕೊಂಡ ಮನೆಯು ಜೇಡ ಹುಳದ ಗೂಡಿನಂತೆಯೂ, ಕಾವಲುಗಾರನ ಗುಡಿಸಿಲಂತೆಯೂ ದುರ್ಬಲವಾಗಿರುವುದು.</verse>
				<verse number="19">ದುಷ್ಟರು ಧನಿಕರಾಗಿ ನಿದ್ರಿಸಿದರೂ ಮತ್ತೆ ನಿದ್ರೆಬಾರದು; ಅವರು ತಮ್ಮ ಕಣ್ಣನ್ನು ತೆರೆಯುತ್ತಲೇ ಆಸ್ತಿ ಇಲ್ಲವಾಗಿರುವುದು.</verse>
				<verse number="20">ವಿಪತ್ತುಗಳು ಪ್ರವಾಹದಂತೆ ಅಂಥವರನ್ನು ಹಿಡಿಯುವುವು; ರಾತ್ರಿಯಲ್ಲಿ ಬಿರುಗಾಳಿ ಅಂಥವರನ್ನು ಅಪಹರಿಸುವುದು.</verse>
				<verse number="21">ಪೂರ್ವದಿಕ್ಕಿನ ಗಾಳಿ ದುಷ್ಟರನ್ನು ಬಡಿಯಲು, ಅವರು ಕೊಚ್ಚಿಕೊಂಡು ಹೋಗುವರು; ಅದು ಅವರನ್ನು ಅವರ ಸ್ಥಳದಿಂದ ಹಾರಿಸಿಬಿಡುವುದು.</verse>
				<verse number="22">ಆ ಗಾಳಿಯು ಕರುಣೆ ಇಲ್ಲದೆ ದುಷ್ಟರ ಮೇಲೆ ಬೀಸಲು, ಅವರು ಅದರ ಶಕ್ತಿಯಿಂದ ತಪ್ಪಿಸಿಕೊಳ್ಳಲು ಯತ್ನಿಸುವರು.</verse>
				<verse number="23">ಕೊನೆಗೆ ಜನರು ದುಷ್ಟರ ಕಡೆಗೆ ಅಪಹಾಸ್ಯದಿಂದ ಚಪ್ಪಾಳೆ ತಟ್ಟುವರು; ಅನಂತರ ಅವರ ಸ್ಥಳದೊಳಗಿಂದ ಅವರನ್ನು ಹೊರಹಾಕುವರು.”</verse>
			</chapter>
			<chapter number="28">
				<verse number="1">ಬೆಳ್ಳಿ ದೊರಕುವ ಗಣಿ ಇದೆ. ಬಂಗಾರ ಪರಿಷ್ಕರಿಸಲು ಸ್ಥಳವೂ ಇದೆ.</verse>
				<verse number="2">ಕಬ್ಬಿಣವನ್ನು ಭೂಮಿಯಿಂದ ತೆಗೆಯುತ್ತಾರೆ; ಅದಿರನ್ನು ತಾಮ್ರವಾಗಲು ಕರಗಿಸುತ್ತಾರೆ.</verse>
				<verse number="3">ಮನುಷ್ಯರು ಕತ್ತಲನ್ನು ಹೋಗಲಾಡಿಸುತ್ತಾರೆ; ಕಾರ್ಗತ್ತಲಲ್ಲಿಯೂ ಮರೆಯಾಗಿರುವ ಲೋಹಗಳಿಗಾಗಿ ಭೂಮಿಯ ಆಳ ಪ್ರದೇಶದೊಳಗೆ ಅವರು ಶೋಧಿಸುತ್ತಾರೆ.</verse>
				<verse number="4">ಜನ ನಿವಾಸದಿಂದ ದೂರವಾಗಿ ಗಣಿ ತೋಡಿ, ಮನುಷ್ಯರು ನಡೆದಾಡದ ಸ್ಥಳಗಳಲ್ಲಿ ಇತರರಿಂದ ಪ್ರತ್ಯೇಕವಾಗಿ ಕೆಲಸ ಮಾಡುತ್ತಾರೆ.</verse>
				<verse number="5">ಭೂಮಿ ಆಹಾರವನ್ನು ಕೊಡುತ್ತದೆ; ಆದರೆ ಅದರ ಕೆಳಭಾಗವು ಬೆಂಕಿಯ ಹಾಗೆ ಬದಲಾಗುವುದು.</verse>
				<verse number="6">ಭೂಮಿಯ ಬಂಡೆಗಳು ಇಂದ್ರನೀಲಗಳು ಸಿಗುತ್ತವೆ; ಅದರ ಧೂಳಿನಲ್ಲಿ ಬಂಗಾರದ ಗಟ್ಟಿಗಳು ಇರುತ್ತವೆ.</verse>
				<verse number="7">ಆ ದಾರಿ ಯಾವ ಪಕ್ಷಿಗೂ ತಿಳಿಯದು; ಹದ್ದಿನ ಕಣ್ಣು ಸಹ ಅದನ್ನು ಕಂಡಿಲ್ಲ.</verse>
				<verse number="8">ಕಾಡುಮೃಗಗಳು ಅದರ ಮೇಲೆ ನಡೆಯಲಿಲ್ಲ; ಸಿಂಹವು ಅದನ್ನು ದಾಟಲಿಲ್ಲ.</verse>
				<verse number="9">ಮಾನವನ ಹಸ್ತವು ಬಂಡೆಗಳನ್ನು ಒಡೆಯುತ್ತದೆ; ಪರ್ವತಗಳ ಬುಡಗಳನ್ನು ಸಹ ಬರಿದಾಗಿ ಮಾಡುತ್ತವೆ.</verse>
				<verse number="10">ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುತ್ತಾರೆ; ಅವರ ಕಣ್ಣು ಅದರ ಎಲ್ಲಾ ಸಂಪತ್ತನ್ನು ನೋಡುತ್ತದೆ.</verse>
				<verse number="11">ಜನರು ನದಿಗಳ ಮೂಲಗಳನ್ನು ಹುಡುಕುತ್ತಾರೆ; ಅಡಗಿದ್ದ ಸಂಗತಿಗಳನ್ನು ಬೆಳಕಿಗೆ ತರುತ್ತಾರೆ.</verse>
				<verse number="12">ಆದರೆ ಜ್ಞಾನವು ಎಲ್ಲಿ ದೊರಕುವುದು? ಗ್ರಹಿಕೆ ಇರುವ ಸ್ಥಳ ಎಲ್ಲಿ?</verse>
				<verse number="13">ಜ್ಞಾನದ ಮೌಲ್ಯ ಯಾರಿಗೂ ಗೊತ್ತಿಲ್ಲ; ಜೀವಿಸುವವರಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.</verse>
				<verse number="14">ಸಾಗರ, “ಜ್ಞಾನವು ನನ್ನ ಹತ್ತಿರ ಇಲ್ಲ,” ಎನ್ನುತ್ತದೆ; ಸಮುದ್ರವು, “ಜ್ಞಾನವು ನನ್ನ ಬಳಿಯಲ್ಲಿ ಇಲ್ಲ,” ಎನ್ನುತ್ತದೆ.</verse>
				<verse number="15">ಚೊಕ್ಕ ಬಂಗಾರಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲಾಗದು; ಜ್ಞಾನದ ಬೆಲೆಗೆ ಬೆಳ್ಳಿಯನ್ನು ತೂಕಮಾಡಲಾಗದು.</verse>
				<verse number="16">ಜ್ಞಾನವನ್ನು ಓಫಿರಿನ ಬಂಗಾರಕ್ಕೂ, ಅಮೂಲ್ಯವಾದ ಗೋಮೇಧಿಕಕ್ಕೂ, ಇಂದ್ರನೀಲಕ್ಕೂ ಬೆಲೆ ಕಟ್ಟಲಾಗದು.</verse>
				<verse number="17">ಬಂಗಾರವೂ, ಸ್ಪಟಿಕವೂ ಜ್ಞಾನಕ್ಕೆ ಸಮವಾಗಿರುವುದಿಲ್ಲ; ಬಂಗಾರದ ಆಭರಣಗಳು ಸಹ ಜ್ಞಾನಕ್ಕೆ ಸಮವಲ್ಲ.</verse>
				<verse number="18">ಹವಳವೂ, ಸೂರ್ಯಕಾಂತ ಶಿಲೆಯೂ ಜ್ಞಾನಕ್ಕೆ ಹೋಲಿಸಲು ಅರ್ಹವಲ್ಲ; ಜ್ಞಾನದ ಬೆಲೆಯು ಮಾಣಿಕ್ಯಗಳಿಗಿಂತ ಎಷ್ಟೋ ಶ್ರೇಷ್ಠ!</verse>
				<verse number="19">ಕೂಷ್ ದೇಶದ ಪುಷ್ಯರಾಗವು ಸಹ ಜ್ಞಾನಕ್ಕೆ ಹೋಲಿಸಲಾಗುವುದಿಲ್ಲ; ಶುದ್ಧ ಬಂಗಾರದಿಂದಲೂ ಜ್ಞಾನವನ್ನು ಕೊಂಡುಕೊಳ್ಳಲಾಗದು.</verse>
				<verse number="20">ಆದರೆ ಜ್ಞಾನವು ಎಲ್ಲಿಂದ ಬರುವುದು? ಗ್ರಹಿಕೆಯ ಸ್ಥಳವು ಎಲ್ಲಿ?</verse>
				<verse number="21">ಎಲ್ಲಾ ಜೀವಿಗಳ ಕಣ್ಣಿಗೂ ಜ್ಞಾನ ಮರೆಯಾಗಿದೆ; ಆಕಾಶದ ಪಕ್ಷಿಗಳಿಗೂ ಅದು ಗೋಚರವಾಗದು.</verse>
				<verse number="22">ನಾಶಲೋಕವೂ ಮರಣವೂ, “ನಾವು ಜ್ಞಾನದ ಸುದ್ದಿಯನ್ನು ನಮ್ಮ ಕಿವಿಗಳಿಂದ ಕೇಳಿದ್ದೇವೆ ಅಷ್ಟೇ,” ಎನ್ನುತ್ತವೆ.</verse>
				<verse number="23">ದೇವರು ಮಾತ್ರ ಜ್ಞಾನ ಮಾರ್ಗವನ್ನು ತಿಳಿದಿರುತ್ತಾರೆ; ಹೌದು, ದೇವರೇ ಜ್ಞಾನ ಸ್ಥಳವನ್ನು ತಿಳಿದಿದ್ದಾರೆ.</verse>
				<verse number="24">ದೇವರೊಬ್ಬರೇ ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಿ, ಆಕಾಶದ ಕೆಳಗಿನ ಸಮಸ್ತವನ್ನೂ ನೋಡುವವರಾಗಿದ್ದಾರೆ.</verse>
				<verse number="25">ದೇವರು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ, ನೀರುಗಳನ್ನು ತಕ್ಕ ಪ್ರಮಾಣಗಳಿಂದ ಅಳತೆಮಾಡಿ,</verse>
				<verse number="26">ಮಳೆಗೆ ಕಟ್ಟಳೆಯನ್ನೂ, ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ</verse>
				<verse number="27">ಜ್ಞಾನವನ್ನು ಕಂಡು ಲಕ್ಷಿಸಿದರು. ಹೌದು, ದೇವರು ಜ್ಞಾನವನ್ನು ದೃಢಪಡಿಸಿದ್ದಲ್ಲದೆ, ಅದನ್ನು ಪರೀಕ್ಷೆಮಾಡಿದರು.</verse>
				<verse number="28">ದೇವರು ಮನುಷ್ಯನಿಗೆ, “ಇಗೋ, ಕರ್ತ ದೇವರಲ್ಲಿ ಭಯಭಕ್ತಿ ಇಡುವುದೇ ಜ್ಞಾನ! ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ,” ಎಂದು ಹೇಳಿದರು.</verse>
			</chapter>
			<chapter number="29">
				<verse number="1">ಯೋಬನು ಮತ್ತೆ ತನ್ನ ಚರ್ಚೆಯನ್ನು ಮುಂದುವರಿಸಿ ಹೇಳಿದ್ದೇನೆಂದರೆ:</verse>
				<verse number="2">“ಕಳೆದುಹೋದ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಒಳ್ಳೆಯದು; ಆಗ ದೇವರು ನನ್ನನ್ನು ಕಾಪಾಡುತ್ತಿದ್ದರಲ್ಲವೆ?</verse>
				<verse number="3">ದೇವರ ದೀಪವು ನನ್ನ ತಲೆಯ ಮೇಲೆ ಬೆಳಗುತ್ತಿತ್ತು; ನಾನು ದೇವರ ಬೆಳಕಿನಿಂದ ಕತ್ತಲಲ್ಲಿ ನಡೆಯುತ್ತಿದ್ದೆ.</verse>
				<verse number="4">ನಾನು ನನ್ನ ಯೌವನದ ದಿವಸಗಳಲ್ಲಿದ್ದಾಗ ದೇವರ ಸ್ನೇಹವು ನನ್ನ ಗುಡಾರದ ಮೇಲೆ ಇರುತ್ತಿತ್ತು.</verse>
				<verse number="5">ಆಗ ಸರ್ವಶಕ್ತರು ನನ್ನ ಸಂಗಡ ಇರುತ್ತಿದ್ದರು; ನನ್ನ ಸುತ್ತಲೂ ನನ್ನ ಮಕ್ಕಳು ಇದ್ದರು.</verse>
				<verse number="6">ನನ್ನ ಹೆಜ್ಜೆಗಳನ್ನು ಮೊಸರಿನಿಂದ ತೊಳೆಯುತ್ತಾ ಇದ್ದೆನು; ಬಂಡೆಯಿಂದ ನನಗೆ ಓಲಿವ್ ಎಣ್ಣೆ ಪ್ರವಾಹವಾಗಿ ಸುರಿಸುತ್ತಿತ್ತು.</verse>
				<verse number="7">“ನಾನು ಪಟ್ಟಣದ ಮುಂಬಾಗಿಲಿಗೆ ಹೋದಾಗ, ಬೀದಿಯಲ್ಲಿ ನನ್ನ ಪೀಠದ ಮೇಲೆ ಕುಳಿತುಕೊಂಡಾಗ,</verse>
				<verse number="8">ಯುವಕರು ನನ್ನನ್ನು ನೋಡಿ ಪಕ್ಕಕ್ಕೆ ಸರಿದು ನಿಲ್ಲುತ್ತಿದ್ದರು; ವೃದ್ಧರು ಸಹ ಎದ್ದು ನಿಲ್ಲುತ್ತಿದ್ದರು.</verse>
				<verse number="9">ಪ್ರಧಾನರು ನುಡಿಗಳನ್ನು ಬಿಗಿ ಹಿಡಿದು, ತಮ್ಮ ಬಾಯಿಯ ಮೇಲೆ ಕೈ ಇಟ್ಟುಕೊಳ್ಳುತ್ತಿದ್ದರು.</verse>
				<verse number="10">ಘನವಂತರು ಮೌನ ತಾಳುತ್ತಿದ್ದರು; ಅವರ ನಾಲಿಗೆ ಅವರ ಬಾಯಿಯ ಅಂಗಳಕ್ಕೆ ಅಂಟಿರುತ್ತಿತ್ತು.</verse>
				<verse number="11">ಕೇಳಿದ ಕಿವಿಯು ನನ್ನನ್ನು ಹರಸುತ್ತಿತ್ತು; ನೋಡಿದವರು ನನ್ನನ್ನು ಗೌರವಿಸುತ್ತಿದ್ದರು.</verse>
				<verse number="12">ಏಕೆಂದರೆ ಅಂಗಲಾಚುವ ಬಡವನನ್ನೂ, ಸಹಾಯಕನಿಲ್ಲದ ಅನಾಥನನ್ನೂ ನಾನು ರಕ್ಷಿಸುವವನಾಗಿದ್ದೆನು.</verse>
				<verse number="13">ಸಾಯುತ್ತಿದ್ದವರ ಆಶೀರ್ವಾದವು ನನ್ನ ಮೇಲೆ ಬರುತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ಮಾಡುತ್ತಿದ್ದೆನು.</verse>
				<verse number="14">ನಾನು ನೀತಿಯನ್ನು ನನ್ನ ಬಟ್ಟೆಯಂತೆ ಧರಿಸಿದ್ದೆನು; ನನ್ನ ನ್ಯಾಯವು ನಿಲುವಂಗಿಯ ಹಾಗೆಯೂ ಪೇಟದ ಹಾಗೆಯೂ ಇರುತ್ತಿತ್ತು.</verse>
				<verse number="15">ನಾನು ಕುರುಡನಿಗೆ ಕಣ್ಣೂ, ಕುಂಟನಿಗೆ ಕಾಲೂ ಆಗಿದ್ದೆನು.</verse>
				<verse number="16">ದರಿದ್ರರಿಗೆ ನಾನು ತಂದೆಯಾಗಿದ್ದೆನು; ಅಪರಿಚಿತರ ವ್ಯಾಜ್ಯವನ್ನು ವಿಚಾರಿಸುತ್ತಿದ್ದೆನು.</verse>
				<verse number="17">ದುಷ್ಟರ ದವಡೆಗಳನ್ನು ಮುರಿಯುತ್ತಿದ್ದೆನು; ದುಷ್ಟರ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ಬಿಡಿಸುತ್ತಿದ್ದೆನು.</verse>
				<verse number="18">“ಆಗ ನಾನು, ‘ನನ್ನ ಮನೆಯಲ್ಲಿಯೇ ನಾನು ಸಾಯುವೆನು; ಮರಳಿನಂತೆ ನನ್ನ ದಿವಸಗಳು ಇರುತ್ತವೆ,</verse>
				<verse number="19">ನನ್ನ ಬೇರು ನೀರಿನ ಬಳಿ ಹಬ್ಬಿರುತ್ತದೆ; ರಾತ್ರಿಯಿಡಿ ನನ್ನ ಕೊಂಬೆಯ ಮೇಲೆ ಮಂಜು ಬಿದ್ದಿರುತ್ತದೆ.</verse>
				<verse number="20">ನನ್ನ ಘನವು ನನ್ನಲ್ಲಿ ಹೊಸದಾಗಿ ಇರುತ್ತದೆ; ನನ್ನ ಬಿಲ್ಲು ಸಹ ನನ್ನ ಕೈಯಲ್ಲಿ ಎಂದೆಂದಿಗೂ ಬಲಗೊಳ್ಳುತ್ತಾ ಇರುತ್ತದೆ,’ ಎಂದೆಲ್ಲಾ ಹೇಳುತ್ತಿದ್ದೆನು.</verse>
				<verse number="21">“ಜನರು ನನಗೆ ಕಿವಿಗೊಟ್ಟು ಎದುರುನೋಡುತ್ತಿದ್ದರು. ನನ್ನ ಆಲೋಚನೆ ಕೇಳಲು ಮೌನವಾಗಿರುತ್ತಿದ್ದರು.</verse>
				<verse number="22">ನನ್ನ ಮಾತಿನ ಮೇಲೆ ಅವರು ಬೇರೆ ಮಾತನಾಡುತ್ತಿರಲಿಲ್ಲ; ನನ್ನ ನುಡಿ ಅವರ ಕಿವಿಗೆ ಬೀಳುತ್ತಿತ್ತು.</verse>
				<verse number="23">ಮಳೆಯಂತೆ ನನ್ನನ್ನು ಎದುರುನೋಡುತ್ತಿದ್ದರು. ಮುಂಗಾರಿನ ಮಳೆಯಹಾಗೆ ನನ್ನ ಮಾತುಗಳಲ್ಲಿ ಉಲ್ಲಾಸಿಸುತ್ತಿದ್ದರು.</verse>
				<verse number="24">ನಾನು ಅವರನ್ನು ನೋಡಿ ಮುಗುಳ್ನಗಿದಾಗ, ಅವರು ಅದನ್ನು ನಂಬಲಿಲ್ಲ; ನನ್ನ ಮುಖದ ಕಾಂತಿ ಅವರಿಗೆ ಅಮೂಲ್ಯವಾಗಿತ್ತು.</verse>
				<verse number="25">ನಾನು ಅವರ ಪ್ರಧಾನನಾಗಿ ಕೂತು ಸೈನ್ಯಗಳ ನಡುವೆ ಅರಸನಂತೆ ಆಸೀನನಾಗಿದ್ದೆನು. ನಾನು ದುಃಖಿಸುವವರನ್ನು ಸಂತೈಸುವವನಾಗಿಯೂ ಇದ್ದೆನು.</verse>
			</chapter>
			<chapter number="30">
				<verse number="1">“ಆದರೆ ಈ ದಿವಸಗಳಲ್ಲಿ ನನಗಿಂತ ಚಿಕ್ಕವರು, ನನ್ನನ್ನು ನೋಡಿ ಪರಿಹಾಸ್ಯ ಮಾಡುತ್ತಾರೆ. ಇವರ ಪಿತೃಗಳನ್ನು ನನ್ನ ಕುರಿಮಂದೆಯ ನಾಯಿಗಳೊಡನೆ ಇರಲೂ ಅಯೋಗ್ಯರು ಎಂದೆಣಿಸಿದ್ದೆನು.</verse>
				<verse number="2">ಇವರ ಕೈಗಳ ಬಲದಿಂದ ನನಗೇನಾಗುತ್ತಿತ್ತು? ಆಗ ಅವರ ಚೈತನ್ಯವು ಕುಗ್ಗಿಹೋಗಿತ್ತು!</verse>
				<verse number="3">ಅವರು ಬಡತನದಿಂದಲೂ ಹಸಿವಿನಿಂದಲೂ ಬಳಲಿಹೋಗಿದ್ದರು. ನಿರ್ಜನ ಮತ್ತು ಕತ್ತಲೆಯಾದ ಮರುಭೂಮಿಗಳ ಕಡೆಗೆ ಆಹಾರಕ್ಕಾಗಿ ಓಡಾಡುತ್ತಿದ್ದರು.</verse>
				<verse number="4">ಪೊದೆಗಳಲ್ಲಿನ ಉಪ್ಪಿನ ಸೊಪ್ಪು ಸಂಗ್ರಹಿಸುತ್ತಿದ್ದರು. ಜಾಲಿಯ ಬೇರುಗಳೇ ಅವರ ಆಹಾರವಾಗಿತ್ತು.</verse>
				<verse number="5">ಜನರು ಅವರನ್ನು ಹೊರಗೆ ಹಾಕುತ್ತಿದ್ದರು; ಕಳ್ಳರು ಎಂಬಂತೆ ಅವರನ್ನು ಓಡಿಸುತ್ತಿದ್ದರು.</verse>
				<verse number="6">ಆಗ ಅವರು ಭಯಂಕರ ತಗ್ಗುಗಳ ಸಂದುಗಳಲ್ಲಿಯೂ, ಗುಹೆಗಳಲ್ಲಿಯೂ ಬಂಡೆಗಳಲ್ಲಿಯೂ ವಾಸಿಸುತ್ತಿದ್ದರು.</verse>
				<verse number="7">ಪೊದೆಗಳ ನಡುವೆ ಇದ್ದುಕೊಂಡು ಅರಚುತ್ತಿದ್ದರು. ಮುಳ್ಳುಗಿಡಗಳ ಕೆಳಗೆ ಕೂಡಿಕೊಳ್ಳುತ್ತಿದ್ದರು.</verse>
				<verse number="8">ಆಗ ಅವರು ಹುಚ್ಚರಂತೆಯೂ ಹೆಸರಿಲ್ಲದ ಮಕ್ಕಳಂತೆಯೂ ನಾಡಿನಿಂದ ಹೊರಗೆ ಅಲೆದಾಡುತ್ತಿದ್ದರು.</verse>
				<verse number="9">“ಆದರೆ ಈಗ ನಾನು ಅವರ ಹಾಸ್ಯದ ಹಾಡೂ, ಅವರಿಗೆ ಗಾದೆಯೂ ಆಗಿದ್ದೇನೆ.</verse>
				<verse number="10">ಈಗ ನನ್ನನ್ನು ಕಂಡು ಅಸಹ್ಯಪಟ್ಟು, ನನ್ನಿಂದ ದೂರಸರಿಯುತ್ತಿದ್ದಾರೆ. ನನ್ನ ಮುಖದ ಮೇಲೆ ಉಗುಳಲೂ ಹಿಂಜರಿಯುವದಿಲ್ಲ.</verse>
				<verse number="11">ಏಕೆಂದರೆ, ದೇವರು ನನ್ನ ಬಿಲ್ಲಿನ ಹಗ್ಗವನ್ನು ಸಡಲಿಸಿ, ಅವರಿಂದ ನನ್ನನ್ನು ಬಾಧಿಸಿದ್ದಾರೆ. ಆದ್ದರಿಂದ ಈಗ ಅವರು ಯಾವುದೇ ನಿರ್ಬಂಧವಿಲ್ಲದಂತೆ ನನ್ನ ಮೇಲೆ ಹೀಗೆಲ್ಲಾ ವರ್ತಿಸುತ್ತಿದ್ದಾರೆ.</verse>
				<verse number="12">ಬಲಗಡೆಯಲ್ಲಿ ಯುವಕರು ಎದ್ದಿದ್ದಾರೆ; ಅವರು ನನ್ನ ಕಾಲುಗಳಿಗೆ ಬಲೆ ಹಾಕಿದ್ದಾರೆ. ನನ್ನನ್ನು ನಾಶಮಾಡಲು ತಮ್ಮ ಹಾದಿಗಳನ್ನು ನನಗೆ ವಿರೋಧವಾಗಿ ಕಟ್ಟುತ್ತಿದ್ದಾರೆ.</verse>
				<verse number="13">ನನ್ನ ದಾರಿಯನ್ನೂ ಕಡಿದುಹಾಕಿದ್ದಾರೆ; ಅವರು ನನ್ನನ್ನು ನಾಶಮಾಡಲು ಯಶಸ್ವಿಯಾಗುತ್ತಿದ್ದಾರೆ; ‘ಅವನಿಗೆ ಸಹಾಯಕನಿಲ್ಲ,’ ಎಂದು ಹೇಳುತ್ತಿದ್ದಾರೆ.</verse>
				<verse number="14">ಆ ಯುವಕರು ಅಗಲವಾದ ಬಿರುಕಿನಲ್ಲಿ ನೀರು ಬರುವಂತೆ ಬರುತ್ತಿದ್ದಾರೆ; ನಾಶನದಲ್ಲಿರುವ ನನ್ನ ಮೇಲೆ ಅವರು ಉರುಳಿಬೀಳಲಿದ್ದಾರೆ.</verse>
				<verse number="15">ವಿಪತ್ತುಗಳು ನನ್ನ ಮೇಲೆ ತಿರುಗಿಬಿದ್ದು, ನನ್ನ ಮಾನಮರ್ಯಾದೆ ಗಾಳಿಯಂತೆ ಹೊಡೆದುಕೊಂಡು ಹೋಗುತ್ತಿದೆ; ನನ್ನ ಕ್ಷೇಮವು ಮೇಘದ ಹಾಗೆ ಹರಿದು ಹೋಗುತ್ತಿದೆ.</verse>
				<verse number="16">“ಆದರೆ ಈಗ ನನ್ನ ಪ್ರಾಣವು ನನ್ನಲ್ಲಿಯೇ ಕರಗಿಹೋಗಿದೆ; ಸಂಕಟದ ದಿವಸಗಳು ನನ್ನನ್ನು ಬಿಗಿಹಿಡಿದಿವೆ.</verse>
				<verse number="17">ರಾತ್ರಿಯಲ್ಲಿ ನನ್ನ ಎಲುಬುಗಳು ನನ್ನಲ್ಲಿ ಕೊರೆಯುತ್ತಿವೆ; ನನ್ನ ಸಂಕಟಗಳು ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ.</verse>
				<verse number="18">ದೇವರ ಅಧಿಕ ಬಲದಲ್ಲಿ ನನ್ನ ಬಟ್ಟೆಯು ರೋಗದಿಂದ ಬಿಗಿಯಾಗಿ, ಅಂಗಿಯ ಕೊರಳ ಪಟ್ಟಿಯಂತೆ ನನ್ನನ್ನು ಸುತ್ತಿಕೊಂಡಿದೆ.</verse>
				<verse number="19">ದೇವರು ನನ್ನನ್ನು ಕೆಸರಿನಲ್ಲಿ ಕೆಡವಿದ್ದಾರೆ; ನಾನು ಧೂಳಿಗೂ ಬೂದಿಗೂ ಸಮಾನನಾಗಿದ್ದೇನೆ.</verse>
				<verse number="20">“ದೇವರೇ, ನಿಮಗೆ ಮೊರೆಯಿಡುತ್ತೇನೆ ಆದರೆ ನೀವು ನನಗೆ ಉತ್ತರ ಕೊಡುವುದಿಲ್ಲ, ನಾನು ಎದ್ದುನಿಂತರೂ ನನ್ನನ್ನು ಸುಮ್ಮನೆ ನೋಡುತ್ತಿರುವಿರಿ.</verse>
				<verse number="21">ನೀವು ನನಗೆ ಕ್ರೂರರಾಗಿದ್ದೀರಿ, ನಿಮ್ಮ ಹಸ್ತ ಶಕ್ತಿಯಿಂದ ನನಗೆ ಹಿಂಸೆಕೊಡುತ್ತೀರಿ.</verse>
				<verse number="22">ನನ್ನನ್ನು ಗಾಳಿಗೆ ಎತ್ತಿ ತೂರಿಬಿಟ್ಟಿರುವಿರಿ, ನನ್ನನ್ನು ಬಿರುಗಾಳಿಗೆ ತೊಳಲಾಡುವಂತೆ ಮಾಡಿದ್ದೀರಿ.</verse>
				<verse number="23">ದೇವರೇ, ನೀವು ನನ್ನನ್ನು ಎಲ್ಲಾ ಜೀವಿಗಳಿಗೆ ನೇಮಕವಾದ ಮನೆಯೆಂಬ ಮರಣಕ್ಕೆ, ಸೇರಿಸುವಿರಿ ಎಂದು ನನಗೆ ಗೊತ್ತಿದೆ.</verse>
				<verse number="24">“ಆದರೂ ಮುರಿದ ಮನುಷ್ಯನಾಗಿರುವ ನಾನು ಸಹಾಯಕ್ಕಾಗಿ ಕೈಚಾಚಬಾರದೆ? ಆಪತ್ತಿಗೆ ಒಳಪಟ್ಟವನಾದ ನಾನು ಕೂಗಿಕೊಳ್ಳಬಾರದೆ?</verse>
				<verse number="25">ಕಷ್ಟದಲ್ಲಿ ಇದ್ದವರಿಗೋಸ್ಕರ ನಾನು ಕಣ್ಣೀರಿಡಲಿಲ್ಲವೆ? ದರಿದ್ರನಿಗೋಸ್ಕರ ನನ್ನ ಪ್ರಾಣವು ದುಃಖಪಡಲಿಲ್ಲವೆ?</verse>
				<verse number="26">ನಾನು ಒಳ್ಳೆಯದನ್ನು ನಿರೀಕ್ಷಿಸುತ್ತಿರಲು ಕೇಡು ಬಂದೊದಗಿತು; ನಾನು ಬೆಳಕನ್ನು ಎದುರು ನೋಡಲು, ಅಂಧಕಾರ ಬಂದು ಕವಿಯಿತು.</verse>
				<verse number="27">ನನ್ನ ಹೃದಯವು ಯಾವಾಗಲೂ ಅಶಾಂತಿಯಿಂದ ಕುದಿಯುತ್ತಿದೆ; ಸಂಕಟಗಳ ದಿವಸಗಳು ನನ್ನನ್ನು ಎದುರಿಸುತ್ತಿವೆ.</verse>
				<verse number="28">ಬಿಸಿಲು ನನ್ನ ಮೇಲೆ ಬೀಳದಿದ್ದರೂ ನಾನು ಕಪ್ಪಾಗಿ ಹೋದೆನು; ನಾನು ಸಭೆಯಲ್ಲಿ ಎದ್ದು ನಿಂತು ಸಹಾಯಕ್ಕಾಗಿ ಕೂಗಿದೆನು.</verse>
				<verse number="29">ನಾನು ನರಿಗಳಿಗೆ ಸಹೋದರನಾದೆನು; ಗೂಬೆಗಳಿಗೆ ನಾನು ಜೊತೆಯವನಾದೆನು.</verse>
				<verse number="30">ನನ್ನ ಮೇಲಿನ ಚರ್ಮವು ಕಪ್ಪಾಗಿ ಉದುರುತ್ತಿದೆ; ನನ್ನ ಶರೀರ ಜ್ವರದಿಂದ ಬಿಸಿಯಾಗಿದೆ.</verse>
				<verse number="31">ನನ್ನ ಕಿನ್ನರಿಯಲ್ಲಿ ಗೋಳಾಟದ ಧ್ವನಿಯು ಕೇಳಿಸುತ್ತಿದೆ. ನನ್ನ ಕೊಳಲಿನಲ್ಲಿ ಅಳುವವರ ಸ್ವರವೇ ಕೇಳಿಬರುತ್ತಿದೆ.</verse>
			</chapter>
			<chapter number="31">
				<verse number="1">“ಕನ್ನಿಕೆಯನ್ನು ಕಾಮದೃಷ್ಟಿಯಿಂದ ನೋಡುವುದಿಲ್ಲವೆಂದು ನನ್ನ ಕಣ್ಣುಗಳೊಂದಿಗೆ ನಾನು ಒಡಂಬಡಿಕೆಯನ್ನು ಮಾಡಿಕೊಂಡೆನು.</verse>
				<verse number="2">ದೇವರು ಮೇಲಣ ಲೋಕದಿಂದ ಯಾವ ಪಾಲನ್ನು ವಿಧಿಸುವರು? ಸರ್ವಶಕ್ತರು ಉನ್ನತಾಕಾಶದಿಂದ ಕೊಡುವ ಬಾಧ್ಯತೆ ಯಾವುದು?</verse>
				<verse number="3">ದುಷ್ಟರಿಗೆ ವಿಪತ್ತು ಇಲ್ಲವೋ? ಕೆಡುಕರಿಗೆ ವಿನಾಶ ಇಲ್ಲವೋ?</verse>
				<verse number="4">ದೇವರು ನನ್ನ ಮಾರ್ಗಗಳನ್ನು ನೋಡಿ, ನನ್ನ ಹೆಜ್ಜೆಗಳನ್ನೆಲ್ಲಾ ಎಣಿಸುತ್ತಾರಲ್ಲವೆ?</verse>
				<verse number="5">“ನಾನು ಕಪಟವಾಗಿ ನಡೆದುಕೊಂಡಿದ್ದರೆ, ಮೋಸಕ್ಕೆ ನನ್ನ ಕಾಲು ತ್ವರೆಪಟ್ಟಿದ್ದರೆ,</verse>
				<verse number="6">ದೇವರು ನ್ಯಾಯದ ತಕ್ಕಡಿಯಲ್ಲಿ ನನ್ನನ್ನು ತೂಗಿ ನೋಡಲಿ; ನಾನು ನಿರ್ದೋಷಿ ಎಂದು ದೇವರು ತಿಳಿದುಕೊಳ್ಳಲಿ.</verse>
				<verse number="7">ನಾನು ದಾರಿತಪ್ಪಿ ನಡೆದಿದ್ದರೆ, ನನ್ನ ಕಣ್ಣು ಕಂಡವುಗಳ ಹಿಂದೆ ನನ್ನ ಹೃದಯವು ಹೋಗಿದ್ದರೆ, ನನ್ನ ಅಂಗೈಗಳಲ್ಲಿ ದೋಷ ಅಂಟಿಕೊಂಡಿದ್ದರೆ,</verse>
				<verse number="8">ನಾನು ಬಿತ್ತುವುದನ್ನು ಬೇರೊಬ್ಬನು ಉಣ್ಣಲಿ; ನನ್ನ ಬೆಳೆಯು ಬುಡಮೇಲಾಗಲಿ.</verse>
				<verse number="9">“ನನ್ನ ಹೃದಯವು ಪರಸ್ತ್ರೀಗೆ ಮರುಳಾಗಿ, ನನ್ನ ನೆರೆಯವನ ಬಾಗಿಲ ಹತ್ತಿರ ನಾನು ಹೊಂಚುಹಾಕಿದ್ದರೆ,</verse>
				<verse number="10">ನನ್ನ ಹೆಂಡತಿ ಮತ್ತೊಬ್ಬನಿಗೋಸ್ಕರ ಧಾನ್ಯಬೀಸಲಿ, ಮತ್ತೊಬ್ಬರು ಅವಳ ಸಂಗಡ ಮಲಗಲಿ.</verse>
				<verse number="11">ಏಕೆಂದರೆ ನಾನು ಹಾಗೆಲ್ಲಾ ಮಾಡಿದ್ದರೆ, ಅಂಥ ನಡತೆ ದುಷ್ಕಾರ್ಯವಾಗುತ್ತಿತ್ತು, ಆ ಅಪರಾಧವು ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾಗುತ್ತಿತ್ತು.</verse>
				<verse number="12">ಅದು ನಾಶಲೋಕದವರೆಗೆ ದಹಿಸುವಂಥಾ ಅಗ್ನಿಯಾಗುತ್ತಿತ್ತು, ಅದು ನನ್ನ ಆದಾಯವನ್ನೆಲ್ಲಾ ನಿರ್ಮೂಲ ಮಾಡುತ್ತಿತ್ತು.</verse>
				<verse number="13">“ಒಂದು ವೇಳೆ ನನಗೂ ನನ್ನ ದಾಸದಾಸಿಯರಿಗೂ ನನ್ನ ಮೇಲೆ ವ್ಯಾಜ್ಯವಾದಾಗ, ನಾನು ಅವರ ನ್ಯಾಯವನ್ನು ತಿರಸ್ಕರಿಸಿದ್ದರೆ,</verse>
				<verse number="14">ದೇವರು ನ್ಯಾಯಸ್ಥಾಪನೆಗೆ ಏಳುವಾಗ ನಾನು ಏನು ಮಾಡುತ್ತಿದ್ದೆನು? ದೇವರು ವಿಚಾರಿಸುವಾಗ, ನಾನು ಅವರಿಗೆ ಏನು ಉತ್ತರಕೊಡುತ್ತಿದ್ದೆನು?</verse>
				<verse number="15">ಗರ್ಭದಲ್ಲಿ ನನ್ನನ್ನು ಉಂಟುಮಾಡಿದ ದೇವರೇ ಅವರನ್ನೂ ಉಂಟು ಮಾಡಿದ್ದಾರಲ್ಲವೇ? ಅವರನ್ನೂ, ನನ್ನನ್ನೂ ತಾಯಂದಿರ ಗರ್ಭದಲ್ಲಿ ರೂಪಿಸಿದ ದೇವರು ಒಬ್ಬರೇ ಅಲ್ಲವೇ?</verse>
				<verse number="16">“ನಾನು ಬಡವರ ಬಯಕೆಗಳನ್ನು ಭಂಗಪಡಿಸಿದೆನೋ? ವಿಧವೆಯ ಕಣ್ಣುಗಳನ್ನು ನಾನು ಮಂಕಾಗಿಸಿದೆನೋ?</verse>
				<verse number="17">ದಿಕ್ಕಿಲ್ಲದವರು ಊಟ ಉಣ್ಣದ ಹಾಗೆ, ನಾನು ಮಾತ್ರ ತುತ್ತನ್ನೆಲ್ಲಾ ಒಂಟಿಯಾಗಿ ತಿಂದೆನೋ?</verse>
				<verse number="18">ಇಲ್ಲಾ, ನನ್ನ ಯೌವನಕಾಲದಿಂದ ನಾನು ಅನಾಥರನ್ನು ತಂದೆಯಂತೆ ಬೆಳೆಸಿದೆನು. ಹುಟ್ಟಿದಂದಿನಿಂದ ವಿಧವೆಯರಿಗೆ ಮಾರ್ಗದರ್ಶಿಯಾಗಿದ್ದೆನು.</verse>
				<verse number="19">ಬಟ್ಟೆ ಇಲ್ಲದೆ ಕಷ್ಟಪಡುವವರನ್ನೂ, ಹೊದಿಕೆ ಇಲ್ಲದೆ ನಡುಗುವವರನ್ನೂ ನಾನು ನೋಡಿದಾಗೆಲ್ಲಾ,</verse>
				<verse number="20">ಆ ಬಡವರು ನನ್ನ ಕುರಿ ಉಣ್ಣೆಯಿಂದ ಬೆಚ್ಚಗಾಗಿ, ತಮ್ಮ ಅಂತರಾಳದಿಂದ ನನ್ನನ್ನು ಹರಸಲಿಲ್ಲವೋ?</verse>
				<verse number="21">ನ್ಯಾಯಸ್ಥಾನದಲ್ಲಿ ನನಗೆ ಬೆಂಬಲ ಉಂಟೆಂದು ಕಂಡು, ನಾನು ದಿಕ್ಕಿಲ್ಲದವರ ಮೇಲೆ ನನ್ನ ಕೈಮಾಡಿದ್ದರೆ,</verse>
				<verse number="22">ನನ್ನ ಹೆಗಲು, ಬೆನ್ನಿನ ಕೀಲು ತಪ್ಪಿಹೋಗಲಿ; ನನ್ನ ತೋಳು ಅದರ ಸಂದಿನಿಂದ ಕಳಚಿಬೀಳಲಿ.</verse>
				<verse number="23">ಏಕೆಂದರೆ ದೇವರಿಂದ ಬರುವ ವಿಪತ್ತಿನ ಬಗ್ಗೆ ನನಗೆ ಹೆದರಿಕೆಯಾಯಿತು; ದೇವರ ಪ್ರಭಾವದ ಭಯದ ನಿಮಿತ್ತ ನಾನು ಇಂಥ ಕೃತ್ಯವನ್ನು ಮಾಡುವುದಕ್ಕೆ ಸಾಧ್ಯವಾಗಲಿಲ್ಲ.</verse>
				<verse number="24">“ನಾನು ಬಂಗಾರದಲ್ಲಿ ನನ್ನ ನಿರೀಕ್ಷೆಯನ್ನು ಇಟ್ಟಿದ್ದರೆ, ಅಪರಂಜಿಗೆ, ‘ನೀನು ನನ್ನ ಭದ್ರತೆ,’ ಎಂದು ಹೇಳಿದ್ದರೆ,</verse>
				<verse number="25">ನನ್ನ ಐಶ್ವರ್ಯವು ಬಹಳ ಎಂದು ಕೊಚ್ಚಿಕೊಂಡಿದ್ದರೆ, ನನ್ನ ಕೈ ಬಹಳ ಸಂಪಾದಿಸಿದೆ ಎಂದು ನಾನು ಸಂತೋಷಪಟ್ಟಿದ್ದರೆ,</verse>
				<verse number="26">ನಾನು ಸೂರ್ಯನು ಹೊಳೆಯುವುದನ್ನು ಗಮನಿಸಿ, ಚಂದ್ರನು ಪ್ರಭೆಯಲ್ಲಿ ಚಲಿಸುವುದನ್ನು ನೋಡಿ,</verse>
				<verse number="27">ನನ್ನ ಹೃದಯವು ಮರುಳುಗೊಂಡು, ನನ್ನ ಕೈ ಅವುಗಳನ್ನು ನನ್ನ ಬಾಯಿಂದ ಗೌರವದಿಂದ ಮುಗಿದಿದ್ದರೆ,</verse>
				<verse number="28">ಇದು ಸಹ ನ್ಯಾಯಾಧಿಪತಿಯ ದಂಡನೆಗೆ ಯೋಗ್ಯವಾಗುತ್ತಿತ್ತು; ಏಕೆಂದರೆ, ಆಗ ನಾನು ಉನ್ನತದಲ್ಲಿರುವ ದೇವರಿಗೆ ದ್ರೋಹಿಯಾಗುತ್ತಿದ್ದೆನು.</verse>
				<verse number="29">“ವೈರಿಯ ನಾಶಕ್ಕೆ ನಾನು ಸಂತೋಷಪಟ್ಟು, ವೈರಿಗೆ ಕೇಡು ಬಂದಾಗ ಹಿಗ್ಗಿಕೊಂಡು ಗರ್ವಪಟ್ಟೆನೋ?</verse>
				<verse number="30">ಇಲ್ಲ, ಅವನ ಸಾಯಲಿ ಎಂದು ನಾನು ಶಾಪ ಕೊಡಲಿಲ್ಲ. ನಾನು ನನ್ನ ಬಾಯಿಂದ ಅಂಥ ಪಾಪಮಾಡಲಿಲ್ಲ.</verse>
				<verse number="31">ನನ್ನ ಮನೆಯ ಕೆಲಸದವರು, ‘ಯೋಬನು ನೀಡಿದ ಭೋಜನದಿಂದ ತೃಪ್ತರಾಗದವರು ಯಾರು?’ ಎಂದು ಹೇಳಿಕೊಳ್ಳುತ್ತಿದ್ದರಲ್ಲವೆ?</verse>
				<verse number="32">ಆದರೆ ಯಾವ ಪರದೇಶಸ್ಥರೂ ಬೀದಿಯಲ್ಲಿ ತಂಗಬೇಕಾಗಿರಲಿಲ್ಲ; ಪ್ರಯಾಣಿಕರಿಗೆ ನನ್ನ ಬಾಗಿಲು ಸದಾ ತೆರೆದಿಟ್ಟಿದ್ದೆನು.</verse>
				<verse number="33">ನಾನು ಹೃದಯದಲ್ಲಿ ನನ್ನ ಅಪರಾಧ ಪ್ರಜ್ಞೆಯನ್ನು ಅಡಗಿಸಿ, ಮಾನವರಂತೆ ನನ್ನ ದ್ರೋಹವನ್ನು ಮುಚ್ಚಿಕೊಳ್ಳಲಿಲ್ಲ.</verse>
				<verse number="34">ನಾನು ದೊಡ್ಡ ಸಮೂಹಕ್ಕೆ ಹೆದರಿದೆನೋ? ಕುಲಗಳ ಅವಹೇಳನಕ್ಕೆ ಕಳವಳಗೊಂಡರೂ, ಬಾಗಿಲಿನಿಂದ ಹೊರಗೆ ಹೋಗದೆ ಮೌನವಾಗಿದ್ದೆನೋ?</verse>
				<verse number="35">“ನನ್ನ ಕರೆಗೆ ಕಿವಿಗೊಡತಕ್ಕವರು ಒಬ್ಬರು ಈಗ ಇದ್ದರೆ ಎಷ್ಟೋ ಲೇಸು! ಸರ್ವಶಕ್ತರು ನನಗೆ ಉತ್ತರಕೊಡಲಿ; ನನ್ನ ವಿರೋಧಿಯು ನನ್ನ ಆಪಾದನಾ ಪತ್ರವನ್ನು ಬರೆದು ಕೊಡಲಿ.</verse>
				<verse number="36">ನಾನು ನನ್ನ ಹೆಗಲಲ್ಲಿ ಆ ಲಿಖಿತವನ್ನು ನಿಶ್ಚಯವಾಗಿ ಹೊತ್ತು ನಡೆಯುತ್ತಿದ್ದೆ; ಅದನ್ನು ಕಿರೀಟವಾಗಿ ಧರಿಸಿಕೊಳ್ಳುತ್ತಿದ್ದೆನು.</verse>
				<verse number="37">ನನ್ನ ಹೆಜ್ಜೆಗಳ ಲೆಕ್ಕವನ್ನು ದೇವರಿಗೆ ಒಪ್ಪಿಸುತ್ತಿದ್ದೆನು; ಒಬ್ಬ ಅಧಿಪತಿಯಂತೆ ನಾನು ದೇವರನ್ನು ಸಮೀಪಿಸುತ್ತಿದ್ದೆನು.</verse>
				<verse number="38">“ನನ್ನ ಹೊಲ ನನಗೆ ವಿರೋಧವಾಗಿ ಪ್ರತಿಭಟಿಸಿದ್ದರೆ, ಅದರ ನೇಗಿಲ ಗೆರೆಗಳೆಲ್ಲಾ ದೂರಿ ಅಳುತ್ತಿದ್ದರೆ,</verse>
				<verse number="39">ಕೂಲಿಕೊಡದೆ ಭೂಮಿಯ ಫಲವನ್ನು ನಾನು ತಿಂದಿದ್ದರೆ, ಅದರ ಯಜಮಾನರ ಪ್ರಾಣಹಾನಿಗೆ ಕಾರಣನಾಗಿದ್ದರೆ,</verse>
				<verse number="40">ಗೋಧಿಗೆ ಬದಲಾಗಿ ಮುಳ್ಳುಗಳೂ, ಜವೆಗೋಧಿಗೆ ಬದಲಾಗಿ ಕಳೆಗಳೂ ಬೆಳೆಯಲಿ.” ಹೀಗೆ ಯೋಬನ ಮಾತುಗಳು ಮುಗಿದವು.</verse>
			</chapter>
			<chapter number="32">
				<verse number="1">ಯೋಬನು ತಾನು ನೀತಿವಂತನೆಂದು ಸಾಧಿಸಿದ್ದನು. ಆದ್ದರಿಂದ ಆ ಮೂರು ಸ್ನೇಹಿತರು ಯೋಬನಿಗೆ ಉತ್ತರ ಕೊಡುವುದನ್ನು ನಿಲ್ಲಸಿಬಿಟ್ಟರು.</verse>
				<verse number="2">ಆಗ ರಾಮ ಗೋತ್ರದ ಬೂಜ್ಯನಾದ ಬರಕೇಲನ ಮಗ ಎಲೀಹು, ಯೋಬನ ಮೇಲೆ ಬಹು ಕೋಪಗೊಂಡನು. ಯೋಬನು ದೇವರಿಗಿಂತ ತನ್ನನ್ನು ನ್ಯಾಯವಂತನೆಂದು ಸ್ಥಾಪಿಸಿದ್ದರಿಂದ, ಎಲೀಹು ಅವನ ಮೇಲೆ ಕೋಪಗೊಂಡನು.</verse>
				<verse number="3">ಯೋಬನ ಮೂವರು ಸ್ನೇಹಿತರ ಮೇಲೆಯೂ ಎಲೀಹು ಕೋಪಗೊಂಡನು. ಅವರು ಉತ್ತರ ಕಂಡುಕೊಳ್ಳದೆ, ಯೋಬನನ್ನು ಖಂಡಿಸಿದ್ದರಿಂದ ಎಲೀಹುವಿನ ಕೋಪ ಉರಿಯಿತು.</verse>
				<verse number="4">ಎಲೀಹು, ಯೋಬನ ಮಾತುಗಳು ಮುಗಿಯುವವರೆಗೂ ಕಾದಿದ್ದನು. ಏಕೆಂದರೆ ಅವನಿಗಿಂತ ಅವರೆಲ್ಲರೂ ಹಿರಿಯರಾಗಿದ್ದರು.</verse>
				<verse number="5">ಆ ಮೂವರ ಮಾತಿನಲ್ಲಿ ಏನೂ ಉತ್ತರವಿಲ್ಲವೆಂದು ಎಲೀಹು ನೋಡಿದಾಗ, ಅವನ ಕೋಪ ಮತ್ತಷ್ಟು ಉರಿಯಿತು.</verse>
				<verse number="6">ಆಗ ಬೂಜ್ಯನಾದ ಬರಕೇಲನ ಮಗ ಎಲೀಹು ಹೇಳಿದ್ದೇನೆಂದರೆ: “ನಾನು ಪ್ರಾಯದಲ್ಲಿ ಯುವಕನು, ನೀವು ಪ್ರಾಯಸ್ಥರು. ಆದ್ದರಿಂದ ನಾನು ಸಂಕೋಚಗೊಂಡು ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವುದಕ್ಕೆ ಭಯಪಟ್ಟೆನು.</verse>
				<verse number="7">‘ದಿನ ಗತಿಸಿದವರು ಮಾತನಾಡಲಿ, ಬಹಳ ವರ್ಷದವರು ಜ್ಞಾನವನ್ನು ಬೋಧಿಸಲಿ,’ ಎಂದುಕೊಂಡೆನು.</verse>
				<verse number="8">ಆದರೆ ಮನುಷ್ಯನಲ್ಲಿ ಒಂದು ಆತ್ಮ ಉಂಟು; ಸರ್ವಶಕ್ತರ ಶ್ವಾಸವು ಅವನಿಗೆ ತಿಳುವಳಿಕೆಯನ್ನು ಕೊಡುತ್ತದೆ.</verse>
				<verse number="9">ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ; ಮುದುಕರೇ ನ್ಯಾಯವನ್ನು ಬಲ್ಲವರಲ್ಲ.</verse>
				<verse number="10">“ಆದಕಾರಣ, ನಾನು ಹೇಳುತ್ತಿದ್ದೇನೆ: ನನ್ನ ಮಾತನ್ನು ಕೇಳಿಸಿಕೊಳ್ಳಿರಿ, ನನಗೆ ಗೊತ್ತಿದ್ದನ್ನು ನಾನು ತಿಳಿಸುತ್ತೇನೆ.</verse>
				<verse number="11">ನೀವು ಮಾತಾಡಿ ಮುಗಿಸುವ ತನಕ ನಾನು ಕಾದಿದ್ದೆ. ನೀವು ಹೇಳುತ್ತಿದ್ದ ಕಾರಣಗಳನ್ನೂ, ಏನು ಹೇಳಬೇಕೆಂದು ಹುಡುಕುತ್ತಿದ್ದ ಪದಗಳನ್ನೂ ನಾನು ಕೇಳುತ್ತಿದ್ದೆನು.</verse>
				<verse number="12">ನಾನು ನಿಮ್ಮ ಮಾತಿಗೆ ಪೂರ್ಣ ಲಕ್ಷ್ಯವಿಟ್ಟಿದ್ದೆನು. ಆದರೆ, ನಿಮ್ಮಲ್ಲಿ ಯೋಬನ ತಪ್ಪನ್ನು ರುಜುಪಡಿಸುವವರೂ, ಯೋಬನ ವಾದಗಳಿಗೆ ಸರಿಯಾಗಿ ಉತ್ತರ ಕೊಡುವವರೂ ನಿಮ್ಮಲ್ಲಿ ಯಾರೂ ಇಲ್ಲ.</verse>
				<verse number="13">‘ನಾವು ಯೋಬನಲ್ಲಿ ಜ್ಞಾನವನ್ನು ಕಂಡುಕೊಂಡಿದ್ದೇವೆ ದೇವರೇ ಅವನನ್ನು ಖಂಡಿಸಿಬಿಡಲಿ, ಇದು ಮನುಷ್ಯನಿಂದಾಗುವುದಿಲ್ಲ,’ ಎಂಬುದಾಗಿ ಅಂದುಕೊಳ್ಳಬೇಡಿರಿ.</verse>
				<verse number="14">ಯೋಬನು ನನಗೆ ವಿರೋಧವಾಗಿ ನುಡಿಗಳನ್ನು ಪ್ರಯೋಗ ಮಾಡಲಿಲ್ಲ; ನಿಮ್ಮ ವಾದಗಳಿಂದ ನಾನು ಅವನಿಗೆ ಉತ್ತರ ಕೊಡುವುದಿಲ್ಲ.</verse>
				<verse number="15">“ಯೋಬನೇ, ಇವರು ವಿಸ್ಮಯಗೊಂಡು ಇನ್ನು ಉತ್ತರ ಕೊಡದವರಾಗಿದ್ದಾರೆ; ಇವರಿಗೆ ಮಾತನಾಡಲು ಪದಗಳೇ ಸಿಕ್ಕುತ್ತಾಯಿಲ್ಲ.</verse>
				<verse number="16">ಇವರು ಇನ್ನು ಉತ್ತರ ಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ, ನಾನೂ ಕಾದುಕೊಂಡಿರಬೇಕೋ?</verse>
				<verse number="17">ನಾನು ನನ್ನ ಪಾಲಿನ ಉತ್ತರವನ್ನು ಹೇಳುವೆನು, ನಾನೇ ನನ್ನ ಅಭಿಪ್ರಾಯವನ್ನು ತಿಳಿಸುವೆನು.</verse>
				<verse number="18">ಏಕೆಂದರೆ ಅನೇಕ ವಿಷಯಗಳಿಂದ ನಾನು ತುಂಬಿದ್ದೇನೆ; ನನ್ನೊಳಗಿನ ಆತ್ಮವು ನನ್ನನ್ನು ಒತ್ತಾಯಪಡಿಸುತ್ತಿದೆ.</verse>
				<verse number="19">ನನ್ನ ಅಂತರಾತ್ಮವು ತೆರೆಯದ ದ್ರಾಕ್ಷಾರಸದ ಹಾಗೆ ಇದೆ; ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಇದೆ.</verse>
				<verse number="20">ನೆಮ್ಮದಿಯಿಂದಿರಲು ನಾನು ಮಾತಾಡಲೇಬೇಕು; ನನ್ನ ತುಟಿಗಳನ್ನು ತೆರೆದು ಉತ್ತರಕೊಡುವೆನು.</verse>
				<verse number="21">ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು; ನಾನು ಯಾವ ಮನುಷ್ಯನನ್ನು ಹೊಗಳೆನು.</verse>
				<verse number="22">ಹೊಗಳುವುದರಲ್ಲಿ ನಾನು ಪ್ರವೀಣನಾಗಿದ್ದರೆ, ನನ್ನ ಸೃಷ್ಟಿಕರ್ತ ಆಗಿರುವವರು ನನ್ನನ್ನು ಬೇಗ ತೆಗೆದುಕೊಂಡು ಹೋಗಲಿ.</verse>
			</chapter>
			<chapter number="33">
				<verse number="1">“ಆದ್ದರಿಂದ ಯೋಬನೇ, ನನ್ನ ಮಾತುಗಳನ್ನು ಕೇಳು. ನನ್ನ ಎಲ್ಲಾ ನುಡಿಗಳಿಗೆ ಕಿವಿಗೊಡು ಎಂದು ಕೇಳಿಕೊಳ್ಳುತ್ತೇನೆ.</verse>
				<verse number="2">ಈಗ ನಾನು ಮಾತಾಡಲು ಪ್ರಾರಂಭಿಸಿದ್ದೇನೆ; ನನ್ನ ಮಾತುಗಳು ನನ್ನ ನಾಲಿಗೆಯ ತುದಿಯಲ್ಲಿವೆ.</verse>
				<verse number="3">ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುತ್ತವೆ; ನನ್ನ ತುಟಿಗಳು ನಾನು ತಿಳಿದುಕೊಂಡಿದ್ದನ್ನೇ ಯಥಾರ್ಥವಾಗಿ ಹೇಳುತ್ತವೆ.</verse>
				<verse number="4">ದೇವರ ಆತ್ಮರು ನನ್ನನ್ನು ಉಂಟುಮಾಡಿದರು. ಸರ್ವಶಕ್ತರ ಶ್ವಾಸವೇ ನನಗೆ ಜೀವವನ್ನು ಕೊಟ್ಟಿತು.</verse>
				<verse number="5">ನಿನಗೆ ಸಾಧ್ಯವಾದರೆ ನನಗೆ ಉತ್ತರಕೊಡು; ನನ್ನ ಎದುರಿನಲ್ಲೇ ನಿನ್ನ ವ್ಯಾಜ್ಯವನ್ನು ವಾದಿಸು.</verse>
				<verse number="6">ನೋಡು, ದೇವರ ದೃಷ್ಟಿಯಲ್ಲಿ ನಾನು ನಿನ್ನಂತೆಯೇ ಇದ್ದೇನೆ; ನಾನು ಸಹ ಜೇಡಿಮಣ್ಣಿನಿಂದ ರೂಪಿತವಾಗಿದ್ದೇನೆ.</verse>
				<verse number="7">ಆದ್ದರಿಂದ ನನ್ನ ಭೀತಿ ನಿನ್ನನ್ನು ಎಚ್ಚರಿಸದಿರಲಿ; ನನ್ನ ಒತ್ತಾಯ ನಿನ್ನ ಮೇಲೆ ಭಾರವಾಗಿರಬಾರದು.</verse>
				<verse number="8">“ನಿಶ್ಚಯವಾಗಿ, ನೀನು ಆಡಿದ್ದೆಲ್ಲಾ ನನ್ನ ಕಿವಿಗೆ ಬಿದ್ದಿವೆ. ನಾನೇ ಈ ರೀತಿಯಾಗಿ ನೀನು ಆಡಿದ ಮಾತುಗಳನ್ನು ಕೇಳಿದ್ದೇನೆ:</verse>
				<verse number="9">‘ನಾನು ಶುದ್ಧನು, ನಾನು ತಪ್ಪುಮಾಡಲಿಲ್ಲ; ನಾನು ನಿರ್ದೋಷಿ, ನನ್ನಲ್ಲಿ ಏನೂ ಪಾಪವಿಲ್ಲ.</verse>
				<verse number="10">ಆದರೂ ದೇವರು ನನ್ನಲ್ಲಿ ತಪ್ಪು ಕಂಡುಹಿಡಿಯುತ್ತಿದ್ದಾರೆ; ದೇವರು ನನ್ನನ್ನು ಶತ್ರುವೆಂದು ಎಣಿಸುತ್ತಿದ್ದಾರೆ.</verse>
				<verse number="11">ದೇವರು ನನ್ನ ಕಾಲುಗಳಿಗೆ ಕೋಳ ಹಾಕಿದ್ದಾರೆ; ದೇವರು ನನ್ನ ಎಲ್ಲಾ ಹಾದಿಗಳನ್ನೂ ಪರಿಶೋಧಿಸುತ್ತಿದ್ದಾರೆ.’</verse>
				<verse number="12">“ಹೀಗೆಲ್ಲಾ ನೀನು ಮಾತಾಡಿದ್ದು ಸರಿಯಲ್ಲವೆಂದು ನಾನು ನಿನಗೆ ಹೇಳುತ್ತೇನೆ. ಏಕೆಂದರೆ ದೇವರು ಮನುಷ್ಯರಿಗಿಂತ ಬಹಳ ದೊಡ್ಡವರು.</verse>
				<verse number="13">ದೇವರು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ಕೊಡಲಿಲ್ಲ ಎಂದು ನೀನು ದೇವರೊಂದಿಗೆ ವ್ಯಾಜ್ಯವಾಡುವುದೇಕೆ?</verse>
				<verse number="14">ಏಕೆಂದರೆ ದೇವರು ಮಾತನಾಡುತ್ತಾರೆ. ಹೌದು, ವಿವಿಧ ರೀತಿಯಿಂದ ಮಾತನಾಡುತ್ತಾರೆ; ಆದರೂ ಯಾರು ದೇವರ ಸ್ವರವನ್ನು ಗ್ರಹಿಸಿಕೊಳ್ಳುವುದಿಲ್ಲ.</verse>
				<verse number="15">ಸ್ವಪ್ನದಲ್ಲಿ, ರಾತ್ರಿಯ ದರ್ಶನದಲ್ಲಿ, ಗಾಢನಿದ್ರೆಯು ಮನುಷ್ಯರಿಗೆ ಬಂದಾಗ, ಹಾಸಿಗೆಯ ಮೇಲಿನ ತೂಕಡಿಕೆಗಳಲ್ಲಿ ಸಹ,</verse>
				<verse number="16">ದೇವರು ಮನುಷ್ಯರ ಕಿವಿಗಳನ್ನು ತೆರೆದು, ಎಚ್ಚರಿಕೆಗಳಿಂದ ಮುದ್ರೆಹಾಕಿ ಮಾತಾಡುತ್ತಾರೆ.</verse>
				<verse number="17">ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವದಕ್ಕೂ, ಅವನ ಗರ್ವವನ್ನು ಅಡಗಿಸುವುದಕ್ಕೂ ದೇವರು ಹಾಗೆ ಮಾಡುತ್ತಾರೆ.</verse>
				<verse number="18">ಮನುಷ್ಯನ ಪ್ರಾಣವನ್ನು ಕುಣಿಯಿಂದ ತಡೆಯುತ್ತಾರೆ, ಅವನ ಜೀವವನ್ನು ಖಡ್ಗದಿಂದ ನಾಶವಾಗದ ಹಾಗೆಯೂ ಕಾಪಾಡುತ್ತಾರೆ.</verse>
				<verse number="19">“ಇದಲ್ಲದೆ ಮನುಷ್ಯನು ತನ್ನ ಹಾಸಿಗೆಯಲ್ಲಿ ನೋವಿನಿಂದ ಬಿದ್ದಿರುವಾಗ, ಅವನ ಎಲುಬುಗಳಿಗೆ ನೋವು ಉಂಟಾದಾಗ, ದೇವರು ಅವನನ್ನು ತಿದ್ದುತ್ತಾರೆ.</verse>
				<verse number="20">ಆಗ ಮನುಷ್ಯನು ತನ್ನ ಹಸಿವನ್ನು ಕಳೆದುಕೊಳ್ಳುತ್ತಾನೆ, ಅವನ ಜೀವಕ್ಕೆ ಸವಿ ಊಟವೂ ಅಸಹ್ಯವಾಗುವುದು.</verse>
				<verse number="21">ಅವನ ಶರೀರವು ಕಾಣದ ಹಾಗೆ ಸವೆಯುವುದು; ಕಾಣದಿದ್ದ ಅವನ ಎಲುಬುಗಳು ಸಹ ಬಯಲಾಗುತ್ತವೆ.</verse>
				<verse number="22">ಹೀಗೆ ಮನುಷ್ಯನ ಆತ್ಮವು ಸಮಾಧಿಗೆ ಸಮೀಪಿಸುವುದು. ಅವನ ಪ್ರಾಣವು ಸಾವಿನ ಸಂದೇಶವಾಹಕರ ಹತ್ತಿರವಾಗುವುದು.</verse>
				<verse number="23">ಆಗ ಸಹಸ್ರ ದೂತರಲ್ಲಿ ಒಬ್ಬನು ಮಧ್ಯಸ್ಥನಾಗಿ ಆ ಮನುಷ್ಯನ ಯಥಾರ್ಥತೆಯನ್ನು ತಿಳಿಸುವುದಕ್ಕೆ ಅವನ ಬಳಿಯಲ್ಲಿದ್ದರೆ,</verse>
				<verse number="24">ಆ ಮಧ್ಯಸ್ಥನು ಅವನನ್ನು ಕರುಣಿಸಿ ದೇವರಿಗೆ, ‘ಅಧೋಲೋಕವೆಂಬ ಕುಣಿಗೆ ಇಳಿಯುವುದರಿಂದ ಇವನನ್ನು ಕಾಪಾಡಿರಿ; ನಾನು ಇವನಿಗಾಗಿ ವಿಮೋಚನೆಯ ಕ್ರಯವನ್ನು ಕಂಡುಹಿಡಿದಿದ್ದೇನೆ.</verse>
				<verse number="25">ಅವನ ದೇಹವು ಮಗುವಿನ ದೇಹಕ್ಕಿಂತ ಮೃದುವಾಗಿರಲಿ; ಅವನು ಪುನಃ ತನ್ನ ಯೌವನದ ದಿನಗಳಿಗೆ ಹಿಂದಿರುಗಲಿ,’ ಎಂದು ಹೇಳುತ್ತಿದ್ದನು.</verse>
				<verse number="26">ಆಗ ಆ ಮನುಷ್ಯನು ದೇವರಿಗೆ ಪ್ರಾರ್ಥನೆಮಾಡುವನು; ದೇವರು ಅವನಿಗೆ ತಮ್ಮ ಮೆಚ್ಚುಗೆಯನ್ನು ನೀಡುವರು; ಅವನು ಆನಂದ ಧ್ವನಿಯಿಂದ ದೇವರ ಮುಖವನ್ನು ನೋಡುವನು; ದೇವರು ಅವನನ್ನು ನೀತಿವಂತನೆಂದು ಪುನಃಸ್ಥಾಪಿಸುವರು.</verse>
				<verse number="27">ಅವನು ಜನರ ಮುಂದೆ ಹಾಡುತ್ತಾ ಹೀಗೆ ಹೇಳುವನು: ‘ನಾನು ಪಾಪಮಾಡಿದೆ, ನ್ಯಾಯವನ್ನು ಬಿಟ್ಟು ನಡೆದೆ. ಆದರೂ ದೇವರು ನನ್ನ ಪಾಪಕ್ಕೆ ತಕ್ಕಂತೆ ದಂಡಿಸಲಿಲ್ಲ. ದೇವರು ಮುಯ್ಯಿತೀರಿಸಲಿಲ್ಲ,</verse>
				<verse number="28">ದೇವರು ನನ್ನನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾರೆ; ನಾನು ಜೀವ ಬೆಳಕನ್ನು ಆನಂದಿಸಲು ಬಾಳುವೆನು.’</verse>
				<verse number="29">“ನೋಡು, ದೇವರು ಎರಡು ಸಾರಿಯಲ್ಲದೆ, ಮೂರು ಸಾರಿ ಈ ಕಾರ್ಯಗಳನ್ನೆಲ್ಲಾ ಮನುಷ್ಯರಿಗಾಗಿ ಮಾಡುವರು.</verse>
				<verse number="30">ಮನುಷ್ಯನ ಆತ್ಮವು ಅಧೋಲೋಕದಿಂದ ಹಿಂದಿರುಗಿ ಬಂದು, ಜೀವ ಬೆಳಕನ್ನು ಅನುಭವಿಸುವಂತೆಯೇ ದೇವರು ಹೀಗೆ ಮಾಡುವರು.</verse>
				<verse number="31">“ಯೋಬನೇ, ನನ್ನ ಮಾತನ್ನು ಗಮನಕೊಟ್ಟು ಕೇಳು. ಮೌನವಾಗಿದ್ದು ಕೇಳು, ಈಗ ನಾನು ಮಾತನಾಡುತ್ತೇನೆ.</verse>
				<verse number="32">ನಿನಗೆ ಹೇಳುವುದಕ್ಕೆ ಏನಾದರೂ ಇದ್ದರೆ ಹೇಳು, ನನಗೆ ಉತ್ತರಕೊಡು, ಮಾತನಾಡು, ಏಕೆಂದರೆ ನಾನು ನಿನ್ನನ್ನು ನೀತಿವಂತನೆಂದು ಸ್ಥಾಪಿಸಬೇಕೆಂಬುದೇ ನನ್ನ ಆಶೆ.</verse>
				<verse number="33">ಇಲ್ಲವಾದರೆ ನಾನು ಹೇಳುವುದನ್ನು ಕೇಳು; ಮೌನವಾಗಿರು, ಈಗ ನಾನು ನಿನಗೆ ಜ್ಞಾನವನ್ನು ಬೋಧಿಸುತ್ತೇನೆ.”</verse>
			</chapter>
			<chapter number="34">
				<verse number="1">ಎಲೀಹು ಮುಂದುವರೆಸಿ ಹೇಳಿದ್ದೇನೆಂದರೆ:</verse>
				<verse number="2">ಜ್ಞಾನಿಗಳೇ, ನನ್ನ ನುಡಿಗಳನ್ನು ಕೇಳಿರಿ; ಪಂಡಿತರೇ, ನನಗೆ ಕಿವಿಗೊಡಿರಿ.</verse>
				<verse number="3">ಏಕೆಂದರೆ ಆಹಾರವನ್ನು ನಾಲಿಗೆ ರುಚಿ ನೋಡುವಂತೆ, ಕಿವಿಯು ನುಡಿಗಳನ್ನು ಪರಿಶೋಧಿಸುತ್ತದೆ.</verse>
				<verse number="4">ನಾವು ಸರಿಯಾದುದನ್ನೇ ಆಯ್ದುಕೊಳ್ಳೋಣ; ಒಳ್ಳೆಯದು ಏನೆಂದು ನಮ್ಮೊಳಗೆ ನಾವೇ ತಿಳಿದುಕೊಳ್ಳೋಣ.</verse>
				<verse number="5">“ಏಕೆಂದರೆ ಯೋಬನು, ‘ನಾನು ನಿರ್ದೋಷಿಯಾಗಿದ್ದೇನೆ. ಆದರೆ ದೇವರು ನನಗೆ ನ್ಯಾಯವನ್ನು ನಿರಾಕರಿಸಿದ್ದಾರೆ.</verse>
				<verse number="6">ನನ್ನಲ್ಲಿ ನ್ಯಾಯವಿದ್ದರೂ ನನ್ನನ್ನು ಸುಳ್ಳುಗಾರನೆಂದು ಪರಿಗಣಿಸಲಾಗಿದೆ; ನಾನು ನಿರ್ದೋಷಿಯಾಗಿದ್ದರೂ ದೇವರ ಬಾಣವು ಗುಣಪಡಿಸಲಾಗದ ಗಾಯವನ್ನು ನನಗೆ ಉಂಟುಮಾಡಿದೆ,’ ಎಂದು ಹೇಳುತ್ತಿದ್ದಾನೆ.”</verse>
				<verse number="7">ಯೋಬನಿಗೆ ಸಮಾನನು ಯಾರು? ಅವನು ನೀರು ಕುಡಿಯುವಂತೆ ಅಪಹಾಸ್ಯ ಮಾಡುತ್ತಿದ್ದಾನೆ.</verse>
				<verse number="8">ಯೋಬನು ದುಷ್ಕರ್ಮಿಗಳೊಂದಿಗೆ ಸಹವಾಸ ಇಟ್ಟುಕೊಳ್ಳುತ್ತಾ ದುಷ್ಟಜನರ ಸಂಗಡ ನಡೆದಾಡುತ್ತಾನೆ.</verse>
				<verse number="9">“ಏಕೆಂದರೆ ಅವನು, ‘ದೇವರನ್ನು ಮೆಚ್ಚಿಸಲು ಪ್ರಯತ್ನಿಸುವುದರಿಂದ ಮನುಷ್ಯನಿಗೆ ಯಾವುದೇ ಲಾಭವಿಲ್ಲ,’ ಎಂದು ಹೇಳುತ್ತಾನೆ.”</verse>
				<verse number="10">“ಆದ್ದರಿಂದ ಬುದ್ಧಿವಂತರೇ, ನಾನು ಹೇಳುವುದನ್ನು ಕೇಳಿರಿ, ದೇವರು ಕೆಟ್ಟದ್ದನ್ನು ಮಾಡುತ್ತಾರೆಂಬ ಯೋಚನೆ ದೂರವಿರಲಿ. ಸರ್ವಶಕ್ತರು ಅನ್ಯಾಯವನ್ನು ಎಸಗುತ್ತಾರೆಂಬ ಭಾವನೆ ದೂರವಾಗಿರಲಿ.</verse>
				<verse number="11">ದೇವರು ಮನುಷ್ಯನಿಗೆ ಅವನ ಕೃತ್ಯಗಳಿಗೆ ತಕ್ಕ ಫಲವನ್ನು ಕೊಡುತ್ತಾರೆ; ಹೌದು, ದೇವರು ಪ್ರತಿಯೊಬ್ಬರನ್ನು ಅವರವರ ನಡತೆಗೆ ತಕ್ಕಂತೆ ಅನುಭವಿಸಮಾಡುತ್ತಾರೆ.</verse>
				<verse number="12">ನಿಶ್ಚಯವಾಗಿ ದೇವರು ಕೆಟ್ಟದ್ದನ್ನು ಮಾಡುವುದಿಲ್ಲ, ಸರ್ವಶಕ್ತರು ನ್ಯಾಯವನ್ನು ಡೊಂಕು ಮಾಡುವುದಿಲ್ಲ.</verse>
				<verse number="13">ಭೂಮಿಯ ಮೇಲೆ ದೇವರನ್ನು ನೇಮಿಸಿದವರು ಯಾರು? ಸರ್ವಲೋಕವನ್ನು ದೇವರ ವಶಕ್ಕೆ ಒಪ್ಪಿಸಿಕೊಟ್ಟವರು ಯಾರು?</verse>
				<verse number="14">ಒಂದು ವೇಳೆ, ದೇವರು ತಮ್ಮ ಆತ್ಮವನ್ನೂ, ಶ್ವಾಸವನ್ನೂ, ನಮ್ಮಿಂದ ಹಿಂದಕ್ಕೆ ತೆಗೆದುಕೊಳ್ಳಲು ಮನಸ್ಸುಮಾಡುವುದಾದರೆ,</verse>
				<verse number="15">ಎಲ್ಲಾ ಮನುಷ್ಯರೂ ಒಟ್ಟಿಗೆ ಅಳಿದುಹೋಗುವರು; ಇಡೀ ಮಾನವಕುಲವು ಧೂಳಿಗೆ ಹಿಂದಿರುಗುವುದು.”</verse>
				<verse number="16">“ಯೋಬನೇ, ಅರ್ಥಮಾಡಿಕೊಂಡು, ಇದನ್ನು ಕೇಳಿಸಿಕೋ; ನನ್ನ ಮಾತಿಗೆ ಕಿವಿಗೊಡು.</verse>
				<verse number="17">ನ್ಯಾಯವನ್ನು ದ್ವೇಷಿಸುವ ದೇವರು, ಆಳ್ವಿಕೆಮಾಡಲು ಸಾಧ್ಯವೇ? ನೀತಿವಂತರೂ, ಸರ್ವಶಕ್ತರೂ ಆಗಿರುವ ದೇವರ ಮೇಲೆ ನೀನು ತಪ್ಪುಹೊರಿಸುವಿಯೋ?</verse>
				<verse number="18">ದೇವರು ಅರಸನಿಗೆ, ‘ನೀನು ಮೂರ್ಖ,’ ಎಂದು ಹೇಳಬಲ್ಲರು. ದೇವರು ಪ್ರಧಾನರಿಗೆ, ‘ನೀವು ದುಷ್ಟರು’ ಎಂದು ಕರೆಯಬಲ್ಲರು ಅಲ್ಲವೇ?</verse>
				<verse number="19">ದೇವರು ಅಧಿಪತಿಗಳಿಗೆ ಮುಖದಾಕ್ಷಿಣ್ಯ ತೋರಿಸುವರೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ದೇವರು ಲಕ್ಷಿಸುವರೋ? ಏಕೆಂದರೆ ಅವರೆಲ್ಲರೂ ದೇವರ ಸೃಷ್ಟಿಯಾಗಿದ್ದಾರೆ.</verse>
				<verse number="20">ಜನರು ಮಧ್ಯರಾತ್ರಿಯಲ್ಲಿ ಕ್ಷಣಮಾತ್ರದಲ್ಲಿ ಸಾಯುತ್ತಾರೆ; ಅವರು ತಲ್ಲಣಗೊಂಡು ಇಲ್ಲದೆ ಹೋಗುತ್ತಾರೆ; ಪರಾಕ್ರಮಿಗಳು ಸಹ ಮಾನವರ ಕೈ ಒಳಪಡದೆ ಗತಿಸಿಹೋಗುತ್ತಾರೆ.”</verse>
				<verse number="21">“ಏಕೆಂದರೆ ದೇವರ ಕಣ್ಣು ಮನುಷ್ಯನ ಮಾರ್ಗಗಳ ಮೇಲೆ ಇರುತ್ತದೆ; ದೇವರು ಮನುಷ್ಯನ ಪ್ರತಿಯೊಂದು ಹೆಜ್ಜೆಯನ್ನೂ ನೋಡುತ್ತಾರೆ.</verse>
				<verse number="22">ಆದ್ದರಿಂದ ದೇವರ ದೃಷ್ಟಿಯಿಂದ ದುಷ್ಟರು ಅಡಗಿಕೊಳ್ಳಲು, ಗಾಢಾಂಧಕಾರವೂ ಇಲ್ಲ, ನೆರಳೂ ಇರುವುದಿಲ್ಲ.</verse>
				<verse number="23">ದೇವರು ಮನುಷ್ಯನ ಮೇಲೆ ಹೆಚ್ಚು ಗಮನ ಇಡಬೇಕಾಗಿಲ್ಲ. ಮನುಷ್ಯನು ನ್ಯಾಯವಿಚಾರಣೆಗೆ ಬರಬೇಕೆಂದು ದೇವರು ಕರೆಯುವ ಅವಶ್ಯಕತೆಯೂ ಇಲ್ಲ.</verse>
				<verse number="24">ಯಾವ ವಿಚಾರಣೆ ಇಲ್ಲದೆಯೇ ದೇವರು ಪರಾಕ್ರಮಿಗಳನ್ನು ದಂಡಿಸಬಹುದು. ದೇವರು ಮತ್ತೊಬ್ಬರನ್ನು ಅವರ ಸ್ಥಾನದಲ್ಲಿ ನಿಲ್ಲಿಸಲು ಸಾಧ್ಯ.</verse>
				<verse number="25">ಏಕೆಂದರೆ, ದೇವರು ಅಂಥವರ ದುಷ್ಕಾರ್ಯಗಳನ್ನು ತಿಳಿದಿದ್ದಾರೆ. ರಾತ್ರಿಯಲ್ಲಿ ಅವರನ್ನು ಕೆಡವಿ ದಂಡನೆಗೆ ಗುರಿಮಾಡುವರು.</verse>
				<verse number="26">ಅವರ ದುಷ್ಟತನಕ್ಕಾಗಿ ದೇವರು ಎಲ್ಲರು ನೋಡುವಂತೆ ಅವರನ್ನು ಶಿಕ್ಷಿಸುವರು.</verse>
				<verse number="27">ಅವರು ದೇವರನ್ನು ಹಿಂಬಾಲಿಸದೆ, ದೇವರ ಮಾರ್ಗಗಳನ್ನೆಲ್ಲಾ ಅಲಕ್ಷ್ಯ ಮಾಡಿದ್ದರಷ್ಟೆ.</verse>
				<verse number="28">ಹೀಗೆ ದುಷ್ಟರು ಬಡವರ ಕೂಗನ್ನು ದೇವರ ಬಳಿಗೆ ಬರುವಂತೆ ಮಾಡಿದ್ದರು ದೇವರು ದಿಕ್ಕಿಲ್ಲದವರ ಕೂಗನ್ನು ಆಲೈಸಿದ್ದರು.</verse>
				<verse number="29">ಆದರೆ ದೇವರು ಸುಮ್ಮನಿದ್ದರೆ ಅವರ ಮೇಲೆ, ತಪ್ಪುಹೊರಿಸುವವರು ಯಾರು? ದೇವರು ತಮ್ಮ ಮುಖವನ್ನು ವ್ಯಕ್ತಿಗಾಗಲಿ, ದೇಶಕ್ಕಾಗಲಿ ಮರೆಮಾಡಿದರೆ, ದೇವದರ್ಶನ ಪಡೆಯಬಲ್ಲವರು ಯಾರು?</verse>
				<verse number="30">ಭಕ್ತಿಹೀನನು ಆಳಬಾರದು, ಯಾರೂ ಜನರಿಗೆ ಉರುಲಾಗಬಾರದು, ಎಂಬುದೇ ಇದರಲ್ಲಿ ದೇವರ ಉದ್ದೇಶ.”</verse>
				<verse number="31">“ಒಂದು ವೇಳೆ, ಯಾರಾದರೂ ದೇವರಿಗೆ, ‘ನಾನು ಪಾಪಮಾಡಿದ್ದೇನೆ, ಆದರೆ ಇನ್ನು ಮುಂದೆ ಪಾಪಮಾಡುವುದಿಲ್ಲ.</verse>
				<verse number="32">ದೇವರೇ, ನಾನು ಕಾಣದಿರುವುದನ್ನು ನನಗೆ ಬೋಧಿಸಿರಿ. ನಾನು ತಪ್ಪುಮಾಡಿದ್ದರೂ, ಇನ್ನು ಮೇಲೆ ಅದನ್ನು ಮಾಡುವುದಿಲ್ಲ,’ ಎಂದು ಹೇಳಿದ್ದರೆ ಸರಿ.</verse>
				<verse number="33">ಆದರೆ ನೀನು ಪಶ್ಚಾತ್ತಾಪಪಡಲು ನಿರಾಕರಿಸಿದಾಗ, ದೇವರು ನಿನಗೆ ತಕ್ಕ ದಂಡನೆಯನ್ನು ಕೊಡಬಾರದೆ? ಇದನ್ನು ನೀನೇ ತೀರ್ಮಾನಿಸು, ನಾನು ತೀರ್ಮಾನಿಸುವುದಿಲ್ಲ; ಆದ್ದರಿಂದ ನಿನಗೆ ತಿಳಿದದ್ದನ್ನು ನನಗೆ ತಿಳಿಸು.”</verse>
				<verse number="34">“ತಿಳುವಳಿಕೆಯುಳ್ಳವರೂ, ನನ್ನನ್ನು ಆಲಿಸಿದ ಜ್ಞಾನಿಗಳೂ ನಿನ್ನ ವಿಷಯವಾಗಿ:</verse>
				<verse number="35">‘ಯೋಬನು ತಿಳುವಳಿಕೆಯಿಲ್ಲದೆ ಮಾತಾಡಿದ್ದಾನೆ; ಅವನ ಮಾತುಗಳು ಬುದ್ಧಿಯಿಲ್ಲದ ಮಾತುಗಳು.</verse>
				<verse number="36">ಯೋಬನನ್ನು ಕಡೆಯವರೆಗೆ ಪರೀಕ್ಷಿಸಬೇಕೆಂದು ಬಯಸುತ್ತೇವೆ. ಏಕೆಂದರೆ ಅವನು ದುಷ್ಟರ ಹಾಗೆ ಉತ್ತರ ಕೊಡುತ್ತಾನೆ.</verse>
				<verse number="37">ಯೋಬನು ತನ್ನ ಪಾಪಕ್ಕೆ ದೇವರಿಗೆ ಎದುರಾಗಿ ಪ್ರತಿಭಟನೆಯನ್ನು ಸಹ ಕೂಡಿಸುತ್ತಿದ್ದಾನೆ; ಅಪಹಾಸ್ಯದಿಂದ ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರುದ್ಧ ಹೆಚ್ಚು ಮಾತುಗಳನ್ನಾಡುತ್ತಾನೆ,’ ಎಂದು ನನಗೆ ಹೇಳುತ್ತಿದ್ದಾರೆ.”</verse>
			</chapter>
			<chapter number="35">
				<verse number="1">ಎಲೀಹು ಮತ್ತೆ ಹೇಳಿದ್ದೇನೆಂದರೆ:</verse>
				<verse number="2">“ಯೋಬನೇ, ‘ನನ್ನ ನೀತಿಯು ದೇವರ ನೀತಿಗಿಂತ ದೊಡ್ಡದು,’ ಎಂದು ನೀನು ಹೇಳಿದ್ದು ಸರಿಯೆಂದು ನೆನಸುತ್ತೀಯೋ?</verse>
				<verse number="3">ಏಕೆಂದರೆ, ‘ನೀತಿಯಿಂದ ನನಗೇನು ಪ್ರಯೋಜನವಾಯಿತು? ನಾನು ಪಾಪಮಾಡದೆ ಇದ್ದುದರಿಂದ ನನಗೆ ಲಾಭವೇನು? ಎಂದು ನೀನು ದೇವರಿಗೆ ಕೇಳಿದಿ.’</verse>
				<verse number="4">“ನಾನು ನಿನಗೂ, ನಿನ್ನ ಸಂಗಡ ಇರುವ ಸ್ನೇಹಿತರಿಗೂ ಈಗ ಉತ್ತರ ಕೊಡುತ್ತೇನೆ.</verse>
				<verse number="5">ಆಕಾಶಗಳನ್ನು ದೃಷ್ಟಿಸಿ ನೋಡು; ನಿನಗಿಂತಲೂ ಎತ್ತರವಾಗಿರುವ ಮೇಘಗಳನ್ನು ದೃಷ್ಟಿಸು.</verse>
				<verse number="6">ನೀನು ಪಾಪಮಾಡಿದರೆ, ಅದು ದೇವರನ್ನು ಹೇಗೆ ಬಾಧಿಸುತ್ತದೆ? ನಿನ್ನ ಪಾಪಗಳು ಹೆಚ್ಚಾಗಿದ್ದರೆ, ಅದು ದೇವರಿಗೆ ಏನು ಮಾಡುವುದು?</verse>
				<verse number="7">ನೀನು ನೀತಿವಂತನಾಗಿದ್ದರೆ, ದೇವರಿಗೇನು ಕೊಟ್ಟಂತಾಯಿತು? ಅಥವಾ ದೇವರು ನಿನ್ನ ಕೈಯಿಂದ ಏನು ತೆಗೆದುಕೊಂಡಂತಾಯಿತು?</verse>
				<verse number="8">ನಿನ್ನ ದುಷ್ಟತನವು ನಿನ್ನಂಥವರನ್ನೇ ಬಾಧಿಸುವುದು; ನಿನ್ನ ನೀತಿಯಿಂದ ಬೇರೆ ಜನರಿಗೆ ಮಾತ್ರ ಲಾಭವಾಗುವುದು.</verse>
				<verse number="9">“ಅಪಾರ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾರೆ; ಬಲಿಷ್ಠರ ಭುಜಬಲದಿಂದ ಪೀಡಿತರು ಕಿರಿಚಿಕೊಳ್ಳುತ್ತಾರೆ.</verse>
				<verse number="10">ಆದರೆ, ‘ರಾತ್ರಿಯಲ್ಲಿ ಗೀತೆಗಳನ್ನು ಕೊಡುವ ನನ್ನ ಸೃಷ್ಟಿಕರ್ತರಾದ ದೇವರು ಎಲ್ಲಿ?</verse>
				<verse number="11">ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಬುದ್ಧಿಕಲಿಸಿಕೊಡುವ ದೇವರು ಎಲ್ಲಿ? ಆಕಾಶದ ಪಕ್ಷಿಗಳಿಗಿಂತ ನಮಗೆ ಅಧಿಕ ಜ್ಞಾನವನ್ನು ಕೊಡುವ ದೇವರು ಎಲ್ಲಿ?’ ಎಂದು ಯಾರೂ ಹೇಳುವುದಿಲ್ಲ.</verse>
				<verse number="12">ಜನರು ದುಷ್ಟರ ಸೊಕ್ಕಿನಿಂದ ನೊಂದು ಗೋಳಾಡುತ್ತಾರೆ; ಆದರೂ ದೇವರು ಅವರಿಗೆ ಉತ್ತರವನ್ನು ದಯಪಾಲಿಸುವುದಿಲ್ಲ.</verse>
				<verse number="13">ನಿಶ್ಚಯವಾಗಿ ವ್ಯರ್ಥಮಾತನ್ನು ದೇವರು ಕೇಳುವುದಿಲ್ಲ; ಸರ್ವಶಕ್ತರು ಬರೀಮಾತನ್ನು ಲಕ್ಷಿಸುವುದಿಲ್ಲ.</verse>
				<verse number="14">ಹೀಗಿರಲು, ‘ದೇವರು ಕಾಣುವುದಿಲ್ಲ, ನನ್ನ ವ್ಯಾಜ್ಯವು ದೇವರ ಮುಂದೆ ಇದೆ; ದೇವರಿಗಾಗಿ ಕಾದಿರುತ್ತೇನೆ,’ ಎಂದು ನೀನು ಹೇಳಿದರೆ, ದೇವರು ನಿನಗೆ ಕಿವಿಗೊಡುವರೋ?</verse>
				<verse number="15">ದೇವರು ಕೋಪದಿಂದ ದುಷ್ಟರನ್ನು ದಂಡಿಸದೆ ಇರುವ ಕಾರಣ, ‘ಆಹಾ, ದೇವರು ದ್ರೋಹವನ್ನು ಅಷ್ಟಾಗಿ ಗಮನಿಸುವುದಿಲ್ಲ,’ ಎಂದು ನೀನು ಹೇಳುವಾಗ ದೇವರು ಕೇಳಿಸಿಕೊಳ್ಳುವರೋ?</verse>
				<verse number="16">ಆದ್ದರಿಂದ ಯೋಬನಾದ ನೀನು ವ್ಯರ್ಥವಾಗಿ ಬಾಯಿತೆರೆದು, ತಿಳುವಳಿಕೆಯಿಲ್ಲದೆ ಬಹಳ ಮಾತಾಡಿರುವಿ.”</verse>
			</chapter>
			<chapter number="36">
				<verse number="1">ಎಲೀಹು ಮುಂದುವರಿದು ಹೇಳಿದ್ದೇನೆಂದರೆ:</verse>
				<verse number="2">“ನನ್ನನ್ನು ಸ್ವಲ್ಪ ತಾಳಿಕೋ, ನಾನು ನಿನಗೆ ತೋರಿಸಿಕೊಡುತ್ತೇನೆ. ಏಕೆಂದರೆ ದೇವರ ಪರವಾಗಿ ಇನ್ನೂ ಹೇಳತಕ್ಕ ಮಾತುಗಳು ಇವೆ.</verse>
				<verse number="3">ನಾನು ನನ್ನ ತಿಳುವಳಿಕೆಯನ್ನು ದೂರದಿಂದ ಪಡೆದುಕೊಳ್ಳುತ್ತೇನೆ. ನನ್ನ ಸೃಷ್ಟಿಕರ್ತ ನ್ಯಾಯವಂತರು ಎಂದು ನಿರೂಪಿಸುವೆನು.</verse>
				<verse number="4">ನಿಜವಾಗಿ ನನ್ನ ಮಾತುಗಳು ಸುಳ್ಳಲ್ಲ; ತಿಳುವಳಿಕೆಯಲ್ಲಿ ಸಂಪೂರ್ಣನಾದ ಒಬ್ಬನಾಗಿ ನಾನು ನಿನ್ನ ಬಳಿಯಲ್ಲಿಯೇ ಇದ್ದೇನೆ.</verse>
				<verse number="5">“ನೋಡು, ದೇವರು ಸರ್ವಶಕ್ತರು, ಆದರೂ ಯಾರನ್ನೂ ತಿರಸ್ಕಾರ ಮಾಡುವುದಿಲ್ಲ. ಶಕ್ತಿವಂತರಾದ ದೇವರು ತಮ್ಮ ಉದ್ದೇಶದಲ್ಲಿ ದೃಢವಾಗಿದ್ದಾರೆ.</verse>
				<verse number="6">ದುಷ್ಟರು ಬಹುಕಾಲ ಬಾಳಲು ದೇವರು ಅನುಮತಿಸುವುದಿಲ್ಲ; ಆದರೆ ದೇವರು ಬಾಧೆಪಡುವವರಿಗೆ ಅವರ ಹಕ್ಕುಗಳನ್ನು ಕೊಡುತ್ತಾರೆ.</verse>
				<verse number="7">ದೇವರು ನೀತಿವಂತರಿಂದ ತಮ್ಮ ಕಣ್ಣುಗಳನ್ನು ತೊಲಗಿಸುವುದಿಲ್ಲ; ದೇವರು ನೀತಿವಂತರನ್ನು ಅರಸುಗಳ ಸಂಗಡ ಸಿಂಹಾಸನದಲ್ಲಿ ಕುಳ್ಳಿರಿಸುವರು; ಹೌದು, ದೇವರು ಅವರನ್ನು ಎಂದೆಂದಿಗೂ ಉನ್ನತಕ್ಕೇರಿಸುವರು.</verse>
				<verse number="8">ಒಂದು ವೇಳೆ ಜನರು ಸಂಕಟದ ಸಂಕೋಲೆಗಳಿಂದ ಬಂಧಿತರಾಗಿ, ಬಾಧೆಯ ಹಗ್ಗಗಳಿಂದ ಹಿಡಿಯಲಾಗಿದ್ದರೆ,</verse>
				<verse number="9">ದೇವರು ಅವರ ಕೃತ್ಯವನ್ನೂ ಸೊಕ್ಕಿನ ದ್ರೋಹಗಳನ್ನೂ ಅವರಿಗೆ ಹೇಳುವರು.</verse>
				<verse number="10">ದೇವರು ಅವರ ಕಿವಿಯನ್ನು ತಿದ್ದುವಿಕೆಗಾಗಿ ತೆರೆದು, ಜನರು ದುಷ್ಟತನವನ್ನು ಬಿಟ್ಟು ತಿರುಗಿಕೊಳ್ಳುವಂತೆ ಅವರಿಗೆ ಆಜ್ಞಾಪಿಸುವರು.</verse>
				<verse number="11">ಒಂದು ವೇಳೆ, ಜನರು ವಿಧೇಯರಾಗಿ ದೇವರನ್ನು ಸೇವಿಸಿದರೆ, ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿ ಕಳೆಯುವರು. ತಮ್ಮ ವರ್ಷಗಳನ್ನು ಸಂತೃಪ್ತಿಯಲ್ಲಿಯೂ ಪೂರೈಸುವರು.</verse>
				<verse number="12">ಅವರು ವಿಧೇಯರಾಗದಿದ್ದರೆ, ಸಂಕಟದ ಸಾಗರದಲ್ಲಿ ಸಾಗಿಹೋಗುವರು; ತಿಳುವಳಿಕೆಯಿಲ್ಲದ ಬಾಳನ್ನು ಬಾಳುವರು.</verse>
				<verse number="13">“ಹೃದಯದಲ್ಲಿ ಭಕ್ತಿಹೀನರಾಗಿರುವವರು ಕೋಪವನ್ನು ಕೂಡಿಸುವರು; ದೇವರು ಅವರನ್ನು ಬಂಧಿಸಿದರೂ, ಅವರು ದೇವರಿಗೆ ಮೊರೆ ಇಡುವುದಿಲ್ಲ.</verse>
				<verse number="14">ಅವರು ತಮ್ಮ ಯೌವನದಲ್ಲಿ, ಪುರುಷಗಾಮಿಗಳ ಮಂದಿರದಲ್ಲಿ ಗತಿಸಿಹೋಗುವರು.</verse>
				<verse number="15">ಶ್ರಮೆ ಪಡುವವರನ್ನು ದೇವರು ಅವರ ಶ್ರಮೆಯ ಮೂಲಕವೇ ಬಿಡುಗಡೆ ಮಾಡುವರು; ದೇವರು ಅವರ ಹಿಂಸೆಯ ಮೂಲಕವೇ ಅವರೊಂದಿಗೆ ಮಾತನಾಡುವರು.</verse>
				<verse number="16">“ದೇವರು ನಿನ್ನನ್ನು ಇಕ್ಕಟ್ಟಿನೊಳಗಿಂದ ಬಿಡಿಸುವರು; ಇಕ್ಕಟ್ಟಿಲ್ಲದ ವಿಶಾಲ ಸ್ಥಳವು ನಿನಗೆ ದೊರೆಯುವುದು; ನಿನ್ನ ಆದರಣೆಗಾಗಿ ನಿನ್ನ ಮೇಜು ಉತ್ತಮ ಆಹಾರಗಳಿಂದ ತುಂಬಿರುವುದು.</verse>
				<verse number="17">ಆದರೆ ಈಗ ನೀನು ದುಷ್ಟರಿಗೆ ಬರಬೇಕಾದ ತೀರ್ಪಿನಿಂದ ತುಂಬಿರುವೆ. ನ್ಯಾಯವಿಚಾರಣೆಯೂ, ತೀರ್ಪೂ ನಿನ್ನನ್ನು ಹಿಡಿದಿರುತ್ತವೆ.</verse>
				<verse number="18">ಯಾರೂ ನಿನ್ನನ್ನು ಸಂಪತ್ತಿನಿಂದ ಆಕರ್ಷಿಸದಂತೆ ಜಾಗರೂಕನಾಗಿರು; ದೊಡ್ಡ ಲಂಚತನವು ನಿನ್ನನ್ನು ವಂಚಿಸಬಾರದು.</verse>
				<verse number="19">ನಿನ್ನ ಐಶ್ವರ್ಯವೂ, ಶಕ್ತಿಸಾಮರ್ಥ್ಯವೂ ಕಷ್ಟಾನುಭವವಿಲ್ಲದೆ ಸಾಗಿಸಲು ಸಾಧ್ಯವೇ?</verse>
				<verse number="20">ಜನರನ್ನು ಅವರ ಮನೆಗಳಿಂದ ಎಳೆದುಕೊಂಡು ಹೋಗುವುದಕ್ಕೆ ರಾತ್ರಿಯನ್ನು ಬಯಸಬೇಡ.</verse>
				<verse number="21">ಅಕ್ರಮದ ಕರೆಗೆ ಕಾಲಿಡಬೇಡ, ಎಚ್ಚರಿಕೆ! ನೀನು ಕಷ್ಟಕ್ಕಿಂತಲೂ ಕೇಡನ್ನು ಆರಿಸಿಕೊಂಡಿದ್ದೀ.</verse>
				<verse number="22">“ದೇವರು ತಮ್ಮ ಶಕ್ತಿಯಲ್ಲಿ ಉನ್ನತರಾಗಿದ್ದಾರೆ. ದೇವರಂಥ ಬೋಧಕರು ಯಾರಿದ್ದಾರೆ?</verse>
				<verse number="23">ದೇವರ ಮಾರ್ಗವನ್ನು ದೇವರಿಗೆ ನೇಮಿಸಿದವರ‍್ಯಾರು? ‘ನೀವು ಮಾಡಿರುವುದು ಅನ್ಯಾಯ,’ ಎಂದು ದೇವರಿಗೆ ಹೇಳುವವರು ಯಾರು?</verse>
				<verse number="24">ಮನುಷ್ಯರು ಹೊಗಳಿ ಹಾಡುವ ಹಾಡುಗಳಿಂದ, ದೇವರ ಕೃತ್ಯಗಳನ್ನು ಉನ್ನತಪಡಿಸಲು ನೆನಸಿಕೋ.</verse>
				<verse number="25">ಎಲ್ಲಾ ಮನುಷ್ಯರು ದೇವರ ಕೃತ್ಯಗಳನ್ನು ಕಂಡಿದ್ದಾರೆ; ಹೌದು, ಮನುಷ್ಯರು ದೂರದಿಂದ ನೋಡುತ್ತಾರೆ.</verse>
				<verse number="26">ದೇವರು ಮಹೋನ್ನತರು; ದೇವರು ನಮ್ಮ ಅರಿವಿಗೆ ನಿಲುಕರು. ದೇವರ ವರ್ಷಗಳು ಅಸಂಖ್ಯಾತವಾಗಿವೆ.</verse>
				<verse number="27">“ದೇವರು ನೀರಿನ ಹನಿಗಳನ್ನು ಕೂಡಿಸಿದಾಗ, ಮಂಜಿನಿಂದ ತಿಳಿಮಳೆ ಸುರಿಯುತ್ತವೆ.</verse>
				<verse number="28">ಮೋಡಗಳು ಮಳೆಗರೆಯುತ್ತವೆ. ಮನುಷ್ಯರ ಮೇಲೆ ಸಮೃದ್ಧಿಯಾಗಿ ಚಿಮುಕಿಸುತ್ತವೆ.</verse>
				<verse number="29">ಮೋಡಗಳ ವಿಸ್ತೀರ್ಣತೆಯನ್ನೂ, ದೇವರ ಗುಡಾರದಿಂದ ಗುಡುಗುವುದನ್ನೂ ಗ್ರಹಿಸಿಕೊಳ್ಳುವವರು ಯಾರು?</verse>
				<verse number="30">ಇಗೋ, ದೇವರು ಮಿಂಚನ್ನು ತಮ್ಮ ಸುತ್ತಲು ಚದರಿಸುತ್ತಾರೆ. ಸಮುದ್ರದ ಆಳವನ್ನು ಸಹ ಆವರಿಸುತ್ತಾರೆ.</verse>
				<verse number="31">ಈ ರೀತಿಯಾಗಿ ದೇವರು ದೇಶಗಳನ್ನು ಆಳುತ್ತಾರೆ ಸಮೃದ್ಧಿಯಾಗಿ ದೇವರು ಆಹಾರ ಕೊಡುತ್ತಾರೆ.</verse>
				<verse number="32">ದೇವರು ತಮ್ಮ ಕೈಯಲ್ಲಿ ಮಿಂಚನ್ನು ಹಿಡಿದುಕೊಂಡು, ಅದನ್ನು ಗುರಿಮುಟ್ಟುವಂತೆ ಆಜ್ಞಾಪಿಸುತ್ತಾರೆ.</verse>
				<verse number="33">ಬಿರುಗಾಳಿಯು ಬರುತ್ತಿದೆ ಎಂದು ದೇವರ ಸಿಡಿಲು ತಿಳಿಸುತ್ತದೆ; ದನಕರುಗಳು ಸಹ ದೇವರ ಆಗಮನವನ್ನು ತಿಳಿಸುತ್ತವೆ.</verse>
			</chapter>
			<chapter number="37">
				<verse number="1">“ಇದನ್ನು ನೋಡಿದಾಗ ನನ್ನ ಹೃದಯವು ನಡುಗಿ, ಅದರ ಸ್ಥಳದಿಂದ ಜಿಗಿಯುವಂತಾಗುತ್ತದೆ.</verse>
				<verse number="2">ದೇವರ ಧ್ವನಿಯ ಘರ್ಜನೆಯನ್ನು ಕೇಳಿರಿ. ದೇವರ ಬಾಯಿಂದ ಹೊರಡುವ ಮಾತನ್ನು ಲಕ್ಷ್ಯಕೊಟ್ಟು ಆಲಿಸಿರಿ.</verse>
				<verse number="3">ತಮ್ಮ ಮಿಂಚನ್ನು ದೇವರು ಆಕಾಶಮಂಡಲದಲ್ಲಿ ಹರಡುತ್ತಾರೆ; ಅದನ್ನು ಭೂಮಿಯ ಅಂಚುಗಳವರೆಗೆ ಕಳುಹಿಸುತ್ತಾರೆ.</verse>
				<verse number="4">ಮಿಂಚಿನ ತರುವಾಯ ಘರ್ಜನೆಯ ಶಬ್ದ ಕೇಳಿಬರುವುದು; ದೇವರು ಮಹತ್ತಿನ ಶಬ್ದದಿಂದ ಗುಡುಗುತ್ತಾರೆ; ದೇವರ ಸ್ವರ ಕೇಳುವಾಗ ಅದನ್ನು ತಡೆಯಲಾಗದು.</verse>
				<verse number="5">ದೇವರು ತಮ್ಮ ಸ್ವರದಿಂದ ಅದ್ಭುತಕಾರ್ಯಗಳನ್ನು ಗುಡುಗುತ್ತಾರೆ; ನಾವು ಗ್ರಹಿಸಲಾಗದ ಮಹಾತ್ಕಾರ್ಯಗಳನ್ನು ದೇವರು ಮಾಡುತ್ತಾರೆ.</verse>
				<verse number="6">ದೇವರು ಹಿಮಕ್ಕೆ, ‘ಹದವಾಗಿ ಭೂಮಿಗೆ ಬೀಳು’ ಎಂದು ಹೇಳುತ್ತಾರೆ. ಮಳೆಗೆ, ‘ಭೂಮಿಯ ಮೇಲೆ ರಭಸದಿಂದ ಸುರಿ’ ಎಂದು ಆಜ್ಞಾಪಿಸುತ್ತಾರೆ.</verse>
				<verse number="7">ಹೀಗೆ ದೇವರು ತಮ್ಮ ಕೃತ್ಯವನ್ನು ಜನರೆಲ್ಲರೂ ತಿಳುಕೊಳ್ಳುವಂತೆ ಮಾಡುತ್ತಾರೆ. ಸ್ವಲ್ಪಕಾಲ ಮನುಷ್ಯರ ದುಡಿಮೆಯನ್ನು ನಿಲ್ಲಿಸುತ್ತಾರೆ.</verse>
				<verse number="8">ಆಗ ಮೃಗಗಳು ಅಡಗುವ ಸ್ಥಳಕ್ಕೆ ಹೋಗುತ್ತವೆ, ತಮ್ಮ ಗುಹೆಗಳಲ್ಲಿ ಉಳಿಯುತ್ತವೆ.</verse>
				<verse number="9">ದಕ್ಷಿಣದಿಕ್ಕಿನಿಂದ ಬಿರುಗಾಳಿಯು ಬೀಸುತ್ತದೆ. ಉತ್ತರದಿಂದ ಚಳಿಯೂ ಬರುತ್ತದೆ.</verse>
				<verse number="10">ದೇವರ ಶ್ವಾಸದಿಂದ ನೀರು ಮಂಜುಗಡ್ಡೆ ಆಗುವುದು; ವಿಶಾಲ ಸಮುದ್ರದ ನೀರು ಗಟ್ಟಿಯಾಗುವುದು.</verse>
				<verse number="11">ಮೋಡವನ್ನು ತೇವಾಂಶದಿಂದ ಭಾರಮಾಡುತ್ತಾರೆ; ಮೇಘಮಂಡಲವು ದೇವರ ಮಿಂಚನ್ನು ಚದರಿಸುತ್ತದೆ.</verse>
				<verse number="12">ಭೂಲೋಕದಲ್ಲೆಲ್ಲಾ ಸಿಡಿಲುಗಳಿಗೆ ದೇವರು ಆಜ್ಞಾಪಿಸಲು, ಎಲ್ಲಾ ಕೆಲಸವನ್ನು ಮಾಡುವಂತೆ ಅವು ತಿರುಗುತ್ತವೆ.</verse>
				<verse number="13">ಜನರ ಶಿಕ್ಷಣಕ್ಕಾಗಿಯೂ, ಭೂಮಿಯ ಹಿತಕ್ಕಾಗಿಯೂ ದೇವರು ತಮ್ಮ ಪ್ರೀತಿಯನ್ನು ತೋರಿಸಲು, ಮೇಘಗಳನ್ನು ಬರಮಾಡುತ್ತಾರೆ.</verse>
				<verse number="14">“ಆದ್ದರಿಂದ ಯೋಬನೇ, ಇದಕ್ಕೆ ಕಿವಿಗೊಡು; ಮೌನವಾಗಿ ನಿಂತು ದೇವರ ಅದ್ಭುತಗಳನ್ನು ಧ್ಯಾನಿಸು.</verse>
				<verse number="15">ದೇವರು ಮೋಡಗಳಿಗೆ ಅಪ್ಪಣೆ ಕೊಡುವುದನ್ನು ಅರಿತಿರುವೆಯಾ? ದೇವರ ಮೇಘದ ಸಿಡಿಲು ಹೊಳೆಯುವುದನ್ನೂ ನೀನು ತಿಳಿದಿರುವೆಯಾ?</verse>
				<verse number="16">ಮೋಡಗಳ ತೂಗಾಟವನ್ನು ಬಲ್ಲೆಯಾ? ಜ್ಞಾನಪೂರ್ಣರಾದ ದೇವರ ಅದ್ಭುತಗಳನ್ನೂ ತಿಳಿದುಕೊಂಡಿರುವೆಯಾ?</verse>
				<verse number="17">ಭೂಮಿಯು ದಕ್ಷಿಣ ಗಾಳಿಯಿಂದ ಸ್ತಬ್ಧವಾಗಿರುವಾಗ, ನಿನ್ನ ವಸ್ತ್ರ ಹೇಗೆ ಬಿಸಿಯಾಗಿರುತ್ತವೆ?</verse>
				<verse number="18">ಎರಕ ಹೊಯ್ದ ಬಲವಾಗಿರುವ ಕನ್ನಡಿಯ ಹಾಗೆ, ನೀನು ದೇವರ ಸಂಗಡ ಸೇರಿಕೊಂಡು ಆಕಾಶಮಂಡಲವನ್ನು ವಿಸ್ತರಿಸಬಲ್ಲೆಯಾ?</verse>
				<verse number="19">“ನಾವು ದೇವರಿಗೆ ಏನು ಹೇಳಬೇಕೆಂದು ನಮಗೆ ತಿಳಿಸು; ನಮ್ಮ ಅಂಧಕಾರದಿಂದ ನಾವು ಏನೂ ವಾದಿಸಲು ಸಾಧ್ಯವಿಲ್ಲ.</verse>
				<verse number="20">ನಾನು ಮಾತನಾಡಬೇಕೆಂದು ದೇವರಿಗೆ ಹೇಳಿಕಳುಹಿಸಬೇಕೆ? ಹಾಗೆ ಮನುಷ್ಯನು ಮಾತನಾಡಿದರೆ, ನಿಜವಾಗಿಯೂ ಬದುಕಿರಲು ಸಾಧ್ಯವೇ?</verse>
				<verse number="21">ಗಾಳಿ ಬೀಸಿ ಆಕಾಶ ಶುಭ್ರವಾದಾಗ, ಪ್ರಜ್ವಲಿಸುವ ಸೂರ್ಯನನ್ನು ದೃಷ್ಟಿಸಲಾಗದು ಹೌದು, ಯಾರೂ ದಿಟ್ಟಿಸಿ ನೋಡಲಾರರು.</verse>
				<verse number="22">ಉತ್ತರದಿಂದ ಹೊನ್ನಿನ ಹೊಳಪು ಬರುತ್ತದೆ; ಅದರಂತೆಯೇ ದೇವರ ವಿಸ್ಮಯ ತೇಜಸ್ಸಿನಿಂದ ಬರುತ್ತಾರೆ.</verse>
				<verse number="23">ಇಂಥಾ ಸರ್ವಶಕ್ತರನ್ನು ನಾವು ಕಂಡುಹಿಡಿಯಲಾಗದು; ದೇವರು ಶಕ್ತಿಯಲ್ಲಿ ಉನ್ನತರಾಗಿದ್ದಾರೆ; ನ್ಯಾಯತೀರ್ಪಿನಲ್ಲಿಯೂ, ಮಹಾ ನೀತಿಯಲ್ಲಿಯೂ ದೇವರು ದಬ್ಬಾಳಿಕೆ ನಡೆಸುವವರಲ್ಲ.</verse>
				<verse number="24">ಆದ್ದರಿಂದ ಮನುಷ್ಯರು ದೇವರಿಗೆ ಭಯಪಡುತ್ತಾರೆ; ಆದರೆ ತಾವೇ ಜ್ಞಾನಿಗಳೆಂದು ತಿಳಿದಿರುವವರು ದೇವರು ಲಕ್ಷಿಸುವುದಿಲ್ಲ.”</verse>
			</chapter>
			<chapter number="38">
				<verse number="1">ಆಗ ಯೆಹೋವ ದೇವರು ಬಿರುಗಾಳಿಯೊಳಗಿಂದ ಯೋಬನಿಗೆ ಹೀಗೆಂದು ಉತ್ತರಕೊಟ್ಟರು:</verse>
				<verse number="2">“ಅಜ್ಞಾನದ ಮಾತುಗಳಿಂದ ನನ್ನ ಯೋಜನೆಗಳನ್ನು ಮಂಕುಮಾಡುವ ನೀನು ಯಾರು?</verse>
				<verse number="3">ಶೂರನ ಹಾಗೆ ನಡುವನ್ನು ಕಟ್ಟಿಕೋ, ನಾನು ನಿನ್ನನ್ನು ಪ್ರಶ್ನೆಮಾಡುವೆನು; ನೀನೇ ನನಗೆ ಉತ್ತರಕೊಡು.</verse>
				<verse number="4">“ನಾನು ಭೂಮಿಗೆ ಅಸ್ತಿವಾರ ಹಾಕಿದಾಗ, ನೀನು ಎಲ್ಲಿ ಇದ್ದೀ? ನಿನಗೆ ತಿಳುವಳಿಕೆ ಇದ್ದರೆ ನನಗೆ ಹೇಳು.</verse>
				<verse number="5">ಭೂಮಿಯ ಅಳತೆಯನ್ನು ಗೊತ್ತುಮಾಡಿದವರು ಯಾರು? ನಿಶ್ಚಯವಾಗಿ ನಿನಗೆ ಗೊತ್ತಿರಬೇಕಲ್ಲಾ? ಭೂಮಿಯ ಮೇಲೆ ನೂಲು ಹಿಡಿದವರು ಯಾರು?</verse>
				<verse number="6">ಯಾವುದರ ಮೇಲೆ ಭೂಮಿಯ ಅಸ್ತಿವಾರ ಸ್ಥಿರಪಡಿಸಲಾಗಿದೆ? ಅದಕ್ಕೆ ಮೂಲೆಗಲ್ಲನ್ನು ಇಟ್ಟವರು ಯಾರು?</verse>
				<verse number="7">ಉದಯದ ನಕ್ಷತ್ರಗಳು ಕೂಡಿ ಹಾಡುತ್ತಿರುವಾಗ, ದೇವದೂತರೆಲ್ಲರೂ ಹರ್ಷಧ್ವನಿಮಾಡುತ್ತಿರುವಾಗ, ಭೂಮಿಗೆ ಮೂಲೆಗಲ್ಲು ಹಾಕಿದವರಾರು?</verse>
				<verse number="8">“ಭೂಗರ್ಭವನ್ನು ನುಗ್ಗಿಕೊಂಡು ಬಂದ, ಸಮುದ್ರವನ್ನು ದ್ವಾರಗಳಿಂದ ಮುಚ್ಚಿದವರು ಯಾರು?</verse>
				<verse number="9">ನಾನು ಸಮುದ್ರಕ್ಕೆ ಮೇಘವನ್ನು ವಸ್ತ್ರವನ್ನಾಗಿ ತೊಡಿಸಿ, ಅದಕ್ಕೆ ಕಾರ್ಗತ್ತಲನ್ನು ಉಡಿಸಿದೆನು.</verse>
				<verse number="10">ನಾನು ಸಮುದ್ರಕ್ಕೆ ಮಿತಿಗಳನ್ನು ನಿಗದಿಪಡಿಸಿ, ಅಗುಳಿಗಳನ್ನೂ, ಬಾಗಿಲುಗಳನ್ನೂ ಇಟ್ಟೆನು.</verse>
				<verse number="11">‘ಇಲ್ಲಿಯ ತನಕ ಬರಬಹುದು, ಇದನ್ನು ಮೀರಿ ಬರಕೂಡದು; ಇಲ್ಲಿಗೇ ನಿನ್ನ ತೆರೆಗಳ ಹೆಮ್ಮೆ ನಿಲ್ಲಲಿ,’ ಎಂದು ಆಜ್ಞಾಪಿಸಿದೆನು.</verse>
				<verse number="12">“ಯೋಬನೇ, ನಿನ್ನ ಜೀವಮಾನದಲ್ಲಿ ಎಂದಾದರೂ, ‘ಅರುಣೋದಯವಾಗಲಿ,’ ಎಂದು ಆಜ್ಞಾಪಿಸಿರುವೆಯಾ? ಮುಂಜಾನೆಯ ಬೆಳಗಿಗೆ ಅದರ ಸ್ಥಳವನ್ನು ತಿಳಿಯಪಡಿಸಿರುವೆಯಾ?</verse>
				<verse number="13">‘ದುಷ್ಟರನ್ನು ಅದರೊಳಗಿಂದ ಒದರಿಬಿಡು,’ ಎಂದು ನೀನು ಭೂಮಿಯ ಅಂಚುಗಳನ್ನು ಹಿಡಿದು ಉದಯಕ್ಕೆ ಎಂದಾದರೂ ಅಪ್ಪಣೆಮಾಡಿದೆಯಾ?</verse>
				<verse number="14">ಮುದ್ರೆ ಒತ್ತಿದ ಜೇಡಿಮಣ್ಣಿನಂತೆ ಭೂಮಿ ರೂಪ ತಾಳುತ್ತದೆ; ನೆರಿಗೆ ಕಟ್ಟಿದ ಉಡಿಗೆಯಂತೆ ಭೂಮಿಯ ವಿಶೇಷತೆಗಳು ಕಾಣಿಸುತ್ತವೆ.</verse>
				<verse number="15">ಅದರಂತೆ ದುಷ್ಟರಿಗೆ ಬೆಳಕು ನಿರಾಕರಿಸಲಾಗುವುದು; ಅವರ ಹಿಂಸಾಚಾರವೂ ಮುರಿದು ಹೋಗುವುದು.</verse>
				<verse number="16">“ನೀನು ಎಂದಾದರೂ ಸಮುದ್ರದ ಬುಗ್ಗೆಗಳಲ್ಲಿ ನಡೆದಿರುವೆಯೋ? ಸಾಗರದ ತಳಹದಿಯಲ್ಲಿ ತಿರುಗಾಡಿರುವೆಯೋ?</verse>
				<verse number="17">ನಿನಗೆ ಮರಣದ ಬಾಗಿಲುಗಳು ತೋರಿಸಲಾಗಿದೆಯೋ? ಘೋರಾಂಧಕಾರದ ಬಾಗಿಲುಗಳನ್ನು ನೀನು ಕಂಡಿರುವೆಯೋ?</verse>
				<verse number="18">ಭೂವಿಸ್ತಾರಗಳನ್ನು ನೀನು ಗ್ರಹಿಸಿರುವೆಯೋ? ಇದನ್ನೆಲ್ಲಾ ನೀನು ತಿಳಿದಿದ್ದರೆ ನನಗೆ ಹೇಳು ನೋಡೋಣ.</verse>
				<verse number="19">“ಬೆಳಕಿನ ನಿವಾಸಕ್ಕೆ ಹೋಗುವ ಮಾರ್ಗವೆಲ್ಲಿ? ಕತ್ತಲು ವಾಸಮಾಡುವ ಸ್ಥಳವೆಲ್ಲಿ?</verse>
				<verse number="20">ನೀನು ಬೆಳಕನ್ನೂ ಕತ್ತಲನ್ನೂ ಅವುಗಳ ಸ್ಥಳಕ್ಕೆ ತೆಗೆದುಕೊಂಡು ಹೋಗಬಲ್ಲೆಯಾ? ಅವು ತಮ್ಮ ಮನೆಗಳಿಗೆ ಹೋಗುವ ಹಾದಿಗಳನ್ನು ನೀನು ಬಲ್ಲೆಯಾ?</verse>
				<verse number="21">ನಿಜವಾಗಿಯೂ ನೀನು ಆಗ ಹುಟ್ಟಿದ್ದರೆ, ಇವೆಲ್ಲಾ ನಿನಗೆ ಗೊತ್ತಾಗುತಿತ್ತು. ಮತ್ತು ಈಗ ನೀನು ಬಹಳ ವರ್ಷಗಳ ವೃದ್ಧನಾಗಿರುತ್ತಿದ್ದೆ.</verse>
				<verse number="22">“ಯೋಬನೇ, ನೀನು ಹಿಮದ ಉಗ್ರಾಣಗಳಲ್ಲಿ ಪ್ರವೇಶಿಸಿರುವೆಯಾ? ಕಲ್ಮಳೆಯ ಉಗ್ರಾಣಗಳನ್ನು ನೋಡಿರುವೆಯಾ?</verse>
				<verse number="23">ಅವುಗಳನ್ನು ನಾನು ಇಕ್ಕಟ್ಟಿನ ಕಾಲಕ್ಕಾಗಿ ಇಟ್ಟಿರುವೆನು; ಯುದ್ಧಕದನಗಳ ದಿನಗಳಿಗಾಗಿಯೂ ಕಾದಿಟ್ಟಿರುವೆನು.</verse>
				<verse number="24">ಬೆಳಕಿನ ಮೂಲ ಮಾರ್ಗ ಎಲ್ಲಿದೆ? ಪೂರ್ವ ಗಾಳಿಯ ಮಾರ್ಗವು ಯಾವುದು?</verse>
				<verse number="25">ಮಳೆಯ ಪ್ರವಾಹಕ್ಕೆ ಕಾಲುವೆಗಳನ್ನು ಕಡಿದವರು ಯಾರು? ಸಿಡಿಲಿಗೆ ಮಾರ್ಗವನ್ನು ನೇಮಿಸಿದವರು ಯಾರು?</verse>
				<verse number="26">ಮಳೆ ಮನುಷ್ಯರಿಲ್ಲದ ಕಾಡಿನಲ್ಲಿಯೂ ನಿರ್ಜನ ಪ್ರದೇಶದಲ್ಲಿಯೂ, ಸುರಿಯುವುದು.</verse>
				<verse number="27">ಹಾಳು ಬೈಲುಗಳಿಗೆ ತೃಪ್ತಿಯನ್ನು ಉಂಟುಮಾಡುವುದು; ಹಸಿರಾದ ಹುಲ್ಲನ್ನು ಮೊಳಿಸುವುದು.</verse>
				<verse number="28">ಮಳೆಗೆ ತಂದೆ ಇದ್ದಾನೆಯೇ? ಮಂಜಿನ ಹನಿಗಳನ್ನು ಹೆತ್ತವಳಿದ್ದಾಳೆಯೆ?</verse>
				<verse number="29">ಯಾರ ಗರ್ಭದಿಂದ ಹಿಮಗಡ್ಡೆ ಹೊರಡುತ್ತದೆ? ಆಕಾಶದ ಇಬ್ಬನಿಯನ್ನು ಹೆತ್ತವರು ಯಾರು?</verse>
				<verse number="30">ಕಲ್ಲಿನ ಹಾಗೆ ನೀರು ಗಟ್ಟಿಯಾಗುವುದು ಯಾವಾಗ? ಸಮುದ್ರದ ಮೇಲ್ಭಾಗವು ಹೆಪ್ಪುಗಟ್ಟುವುದು ಯಾವಾಗ?</verse>
				<verse number="31">“ನೀನು ಕೃತ್ತಿಕೆಯ ಸರಪಣಿಯನ್ನು ಬಂಧಿಸಬಲ್ಲೆಯಾ? ಮೃಗಶಿರದ ಸಂಕೋಲೆಯನ್ನು ಬಿಚ್ಚಬಲ್ಲೆಯಾ?</verse>
				<verse number="32">ನೀನು ನಕ್ಷತ್ರರಾಶಿಗಳನ್ನು ಅವುಗಳ ಕಾಲದಲ್ಲಿ ಹೊರಗೆ ಬರಮಾಡುವೆಯಾ? ಸಪ್ತರ್ಷಿ ತಾರೆಗಳನ್ನು ಅವುಗಳ ಪರಿವಾರ ಸಹಿತವಾಗಿ ನೀನು ನಡೆಸುವೆಯಾ?</verse>
				<verse number="33">ಖಗೋಳದ ನಿಯಮಗಳನ್ನು ನೀನು ತಿಳಿದಿರುವೆಯಾ? ದೇವರ ಆಳಿಕೆಯನ್ನು ಭೂಮಿಯಲ್ಲಿ ಸ್ಥಾಪಿಸಿರುವೆಯಾ?</verse>
				<verse number="34">“ನೀರು ಪ್ರವಾಹವಾಗಿ ನಿನ್ನನ್ನು ತಲುಪುವಂತೆ, ನಿನ್ನ ಧ್ವನಿಯೆತ್ತಿ ಮೋಡಗಳಿಗೆ ಅಪ್ಪಣೆಕೊಡುವೆಯಾ?</verse>
				<verse number="35">ನಿನ್ನ ಅಪ್ಪಣೆಯಂತೆ ಸಿಡಿಲುಗಳು ಹೋಗಿಬಂದು, ‘ಇಗೋ, ನಾವು ಇಲ್ಲಿದ್ದೇವೆ,’ ಎಂದು ನಿನಗೆ ಹೇಳುತ್ತವೆಯೋ?</verse>
				<verse number="36">ಇಬಿಸ್ ಪಕ್ಷಿಗೆ ಜ್ಞಾನವನ್ನು ಕೊಟ್ಟವರು ಯಾರು? ಕೋಳಿಹುಂಜಕ್ಕೆ ಅರಿವನ್ನು ಕೊಟ್ಟವರು ಯಾರು?</verse>
				<verse number="37">ಮೋಡಗಳನ್ನು ಎಣಿಸುವ ಜ್ಞಾನ ಯಾರಿಗೆ ಇದೆ? ಆಕಾಶದಲ್ಲಿನ ಬುದ್ದಲಿಗಳನ್ನು ಸಾಗಿಸುವವರು ಯಾರು?</verse>
				<verse number="38">ಧೂಳುಮಣ್ಣನ್ನು ಒತ್ತಟ್ಟಿಗೆ ಸೇರುವಂತೆ ಮಾಡುವವರು ಯಾರು? ಹೆಂಟೆಗಳು ಒಂದಕ್ಕೊಂದು ಅಂಟಿಕೊಳ್ಳುವಂತೆ ಯಾರು ಮಾಡುವರು?</verse>
				<verse number="39">“ಗುಹೆಯಲ್ಲಿ ಮಲಗಿರುವ ಸಿಂಹದ ಆಹಾರಕ್ಕೋಸ್ಕರ ನೀನು ಬೇಟೆಯಾಡುವೆಯಾ? ಪ್ರಾಯದ ಸಿಂಹಗಳ ಹಸಿವೆಯನ್ನು ನೀನು ನೀಗಿಸುವೆಯಾ?</verse>
				<verse number="40">ಪೊದೆಯಲ್ಲಿ ಹೊಂಚು ಹಾಕಿರುವ, ಪ್ರಾಯದ ಸಿಂಹಗಳ ಹಸಿವೆಯನ್ನು ತೀರಿಸುವೆಯಾ?</verse>
				<verse number="41">ಹಸಿದ ಕಾಗೆ ಮರಿಗಳು ಆಹಾರ ಇಲ್ಲದೆ ಅಲೆದು, ದೇವರಿಗೆ ಮೊರೆ ಇಡುವಾಗ, ತಾಯಿ ಕಾಗೆಗೆ ಆಹಾರವನ್ನು ಒದಗಿಸುವವರು ಯಾರು?</verse>
			</chapter>
			<chapter number="39">
				<verse number="1">“ಕಾಡುಮೇಕೆಗಳು ಈಯುವ ಕಾಲವನ್ನು ನೀನು ತಿಳಿದಿರುವೆಯಾ? ಜಿಂಕೆಗಳ ಹೆರಿಗೆಯನ್ನು ನೋಡಿರುವೆಯಾ?</verse>
				<verse number="2">ಅವುಗಳ ಗರ್ಭ ತುಂಬುವ ತಿಂಗಳುಗಳನ್ನು ಎಣಿಸಿರುವೆಯಾ? ಅವು ಈಯುವ ಕಾಲವನ್ನು ತಿಳಿದಿರುವಿಯೋ?</verse>
				<verse number="3">ಅವು ಬಗ್ಗಿ ಮರಿಗಳನ್ನು ಹಾಕುತ್ತವೆ; ಅದರ ಪ್ರಸವ ವೇದನೆಯನ್ನು ಮರೆತುಬಿಡುತ್ತವೆ.</verse>
				<verse number="4">ಅವುಗಳ ಮರಿಗಳು ಪುಷ್ಟಿಯಾಗಿ ಕಾಡಿನಲ್ಲಿ ಬೆಳೆಯುತ್ತವೆ; ಅವು ತಾಯಿಯನ್ನು ಅಗಲಿದ ಬಳಿಕ ತಿರುಗಿ ಬರುವುದಿಲ್ಲ.</verse>
				<verse number="5">“ಕಾಡುಕತ್ತೆಗೆ ಸ್ವತಂತ್ರವನ್ನು ಕೊಟ್ಟವರು ಯಾರು? ಕಾಡುಕತ್ತೆಯ ಕಟ್ಟನ್ನು ಬಿಚ್ಚಿದವರು ಯಾರು?</verse>
				<verse number="6">ಮರುಭೂಮಿಯನ್ನು ಅದರ ನಿವಾಸವನ್ನಾಗಿ ಕೊಟ್ಟಿರುವುದು ನಾನೇ. ಸವಳುಬಯಲನ್ನು ಅದರ ವಾಸ ಸ್ಥಳವಾಗಿಯೂ ನೇಮಿಸಿದ್ದು ನಾನೇ.</verse>
				<verse number="7">ಪಟ್ಟಣದ ಗದ್ದಲವನ್ನು ಕಾಡುಕತ್ತೆಯು ಧಿಕ್ಕರಿಸುತ್ತದೆ; ಅದು ಓಡಿಸುವವನ ಕೂಗನ್ನು ಲಕ್ಷಿಸುವುದಿಲ್ಲ.</verse>
				<verse number="8">ಬೆಟ್ಟಗಳಲ್ಲಿ ಕಂಡದ್ದೆಲ್ಲಾ ಅದರ ಮೇವು; ಹಸುರಾಗಿರುವುದನ್ನು ಎಲ್ಲಿದ್ದರೂ ಹುಡುಕುತ್ತಲೇ ಇರುವುದು.</verse>
				<verse number="9">“ಕಾಡುಕೋಣವು ನಿನ್ನ ಸೇವೆ ಮಾಡಲು ಎಂದಾದರೂ ಒಪ್ಪಿದೆಯೆ? ಅದು ರಾತ್ರಿಯಲ್ಲಿ ನಿನ್ನ ಗೋದಲಿಯ ಬಳಿಯಲ್ಲಿ ಉಳಿದುಕೊಂಡಿದೆಯೆ?</verse>
				<verse number="10">ಕಾಡುಕೋಣವನ್ನು ಹಗ್ಗದಿಂದ ನೇಗಿಲ ಸಾಲಿಗೆ ಕಟ್ಟಿರುವೆಯಾ? ಅದು ಕಣಿವೆಯಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೆ?</verse>
				<verse number="11">ಅದರ ಶಕ್ತಿ ಹೆಚ್ಚಾಗಿರುವುದರಿಂದ ನೀನು ಕೆಲಸಕ್ಕಾಗಿ ಅದನ್ನೇ ನಂಬಿರುವೆಯಾ? ನಿನ್ನ ಭಾರವಾದ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವೆಯಾ?</verse>
				<verse number="12">ಅದು ನಿನ್ನ ಧಾನ್ಯ ತೆನೆಗಳನ್ನು ಮನೆಗೆ ತರುವುದೆಂದು ನಂಬುವೆಯಾ? ನಿನ್ನ ಕಣದಲ್ಲಿ ಕಾಳು ಕೂಡಿಸುವದೆಂದೂ ಅದನ್ನು ನಿರೀಕ್ಷಿಸುವೆಯಾ?</verse>
				<verse number="13">“ಉಷ್ಟ್ರಪಕ್ಷಿ ಸಂತೋಷದಿಂದ ರೆಕ್ಕೆ ಬಡಿಯುತ್ತದೆ. ಆದರೂ ಕೊಕ್ಕರೆಯ ರೆಕ್ಕೆ ಗರಿಗಳೊಂದಿಗೆ ಅವುಗಳನ್ನು ಹೋಲಿಸಲಾಗದು.</verse>
				<verse number="14">ಏಕೆಂದರೆ ಉಷ್ಟ್ರಪಕ್ಷಿಯು ತನ್ನ ಮೊಟ್ಟೆಗಳನ್ನು ನೆಲದಲ್ಲಿ ಬಿಟ್ಟು, ಕೇವಲ ಮರಳಿನಿಂದ ಅವುಗಳಿಗೆ ಕಾವು ಕೊಡುತ್ತದೆ.</verse>
				<verse number="15">ಜನರು ಕಾಲಿನಿಂದ ಮೊಟ್ಟೆಗಳನ್ನು ಮೆಟ್ಟಿಯಾರು, ಇಲ್ಲವೆ ಕಾಡುಮೃಗ ಅದನ್ನು ಅವುಗಳನ್ನು ತುಳಿದೀತು ಎಂಬ ಚಿಂತೆ ಆ ಪಕ್ಷಿಗೆ ಇಲ್ಲ.</verse>
				<verse number="16">ತನ್ನ ಮರಿಗಳನ್ನು ತನ್ನವುಗಳಲ್ಲ ಎಂಬಂತೆ ಕ್ರೂರವಾಗಿ ನಡೆಸುತ್ತದೆ; ಉಷ್ಟ್ರಪಕ್ಷಿಯು ತನ್ನ ಹೆರಿಗೆ ವ್ಯರ್ಥವಾದರೂ ಅದಕ್ಕೆ ಚಿಂತೆ ಇಲ್ಲ.</verse>
				<verse number="17">ಏಕೆಂದರೆ ದೇವರು ಉಷ್ಟ್ರಪಕ್ಷಿಗೆ ಜ್ಞಾನವನ್ನು ಮರೆಮಾಡಿ, ತಿಳುವಳಿಕೆಯನ್ನು ಅದಕ್ಕೆ ಕೊಡಲಿಲ್ಲವಷ್ಟೆ.</verse>
				<verse number="18">ಆದರೂ ಆ ಪಕ್ಷಿ ತನ್ನ ರೆಕ್ಕೆಗಳನ್ನು ಹರಡಿ ಓಡಿದಾಗ, ಅದು ಕುದುರೆ ಸವಾರನನ್ನು ಸಹ ನೋಡಿ ಅಣಕಿಸುತ್ತದೆ.</verse>
				<verse number="19">“ಯೋಬನೇ, ಕುದುರೆಗೆ ಶಕ್ತಿ ಕೊಟ್ಟವನು ನೀನೋ? ಅದರ ಕೊರಳಿಗೆ ಜುಟ್ಟುಗುಡುಗನ್ನು ಹೊದಿಸಿದವನು ನೀನೋ?</verse>
				<verse number="20">ಮಿಡತೆಯ ಹಾಗೆ ಅದನ್ನು ಹಾರುವಂತೆ ಮಾಡಿದವನು ನೀನೋ? ಅದರ ಕೆನೆತದ ಪ್ರಭಾವ ಭಯಂಕರವಾಗಿದೆಯಲ್ಲಾ?</verse>
				<verse number="21">ಕುದುರೆಯು ನೆಲವನ್ನು ಕೆರೆಯುತ್ತಾ ತನ್ನ ಶಕ್ತಿಯಲ್ಲಿ ಹಿಗ್ಗುತ್ತದೆ; ಸನ್ನದ್ಧವಾಗಿರುವ ಸೈನ್ಯವನ್ನು ಎದುರಿಸಲು ಹೊರಡುತ್ತದೆ.</verse>
				<verse number="22">ಭಯವನ್ನು ಕಂಡು ನಗುತ್ತದೆ; ಯಾವುದಕ್ಕೂ ಹೆದರುವುದಿಲ್ಲ; ಖಡ್ಗಕ್ಕೆ ಸಹ ಹಿಂದೆಗೆಯುವುದಿಲ್ಲ.</verse>
				<verse number="23">ಅದರ ಮೇಲೆ ಬತ್ತಳಿಕೆಯೂ, ಪ್ರಜ್ವಲಿಸುವ ಭಲ್ಲೆಯೂ, ಭರ್ಜಿಯೂ ಥಳಥಳಿಸುತ್ತವೆ.</verse>
				<verse number="24">ಕುದುರೆ ಕಹಳೆಯ ನಾದವನ್ನು ಕೇಳಿದರೂ ಭೀಕರ ಉತ್ಸಾಹದಲ್ಲಿ ನೆಲನುಂಗುವಂತೆ ನಿಲ್ಲದೆ ಓಡುತ್ತದೆ.</verse>
				<verse number="25">ರಣಕಹಳೆ ಮೊಳಗಿದಾಗ ಕುದುರೆ ಕೆನೆಯುತ್ತದೆ. ಅದು ಅಧಿಪತಿಗಳ ಗರ್ಜನೆಯನ್ನೂ ಕಾಳಗದ ಆರ್ಭಟವನ್ನೂ ದೂರದಿಂದಲೇ ಮೂಸಿ ನೋಡಿ ತಿಳಿಯುತ್ತದೆ.</verse>
				<verse number="26">“ಯೋಬನೇ, ಗಿಡುಗವು ತನ್ನ ರೆಕ್ಕೆಗಳನ್ನು ಹರಡಿ, ದಕ್ಷಿಣದ ಕಡೆಗೆ ಹಾರುವುದು ನಿನ್ನ ಜ್ಞಾನದಿಂದಲೋ?</verse>
				<verse number="27">ರಣಹದ್ದು ಎತ್ತರಕ್ಕೆ ಹಾರುವುದೂ, ಉನ್ನತ ಸ್ಥಳದಲ್ಲಿ ಗೂಡುಕಟ್ಟುವುದು ನಿನ್ನ ಅಪ್ಪಣೆಯಿಂದಲೋ?</verse>
				<verse number="28">ಅದು ಬಂಡೆಯ ಸಂದುಗಳಲ್ಲಿ ರಾತ್ರಿಯನ್ನು ಕಳೆಯುತ್ತದೆ; ಶಿಲಾಶಿಖರದ ದುರ್ಗಗಳಲ್ಲಿಯೂ ಅದು ತಂಗುತ್ತದೆ.</verse>
				<verse number="29">ಅಲ್ಲಿಂದಲೇ ಆಹಾರವನ್ನು ಹುಡುಕುತ್ತದೆ; ಅದರ ಕಣ್ಣುಗಳು ದೂರದಿಂದಲೇ ನೋಡುತ್ತವೆ.</verse>
				<verse number="30">ಅದರ ಮರಿಗಳು ತಂದ ಬೇಟೆಯನ್ನು ತಿಂದುಬಿಡುತ್ತವೆ; ಹೆಣ ಬಿದ್ದಲ್ಲಿಯೇ ರಣಹದ್ದು ಇರುವುದು.”</verse>
			</chapter>
			<chapter number="40">
				<verse number="1">ಯೆಹೋವ ದೇವರು ಯೋಬನಿಗೆ ಮತ್ತೆ ಇಂತೆಂದರು:</verse>
				<verse number="2">“ಸರ್ವಶಕ್ತರಾದ ದೇವರೊಂದಿಗೇ ತಪ್ಪು ಕಂಡುಹಿಡಿಯುವ ನೀನು, ದೇವರಿಗೇ ಪಾಠ ಕಲಿಸಿಕೊಡುವೆಯಾ? ದೇವರ ಮೇಲೆಯೇ ಆರೋಪಿಸುವ ನೀನು ಈಗ ಉತ್ತರಕೊಡು!”</verse>
				<verse number="3">ಆಗ ಯೋಬನು ಯೆಹೋವ ದೇವರಿಗೆ ಉತ್ತರವಾಗಿ,</verse>
				<verse number="4">“ಅಯ್ಯೋ, ನಾನು ಅಯೋಗ್ಯ, ತಮಗೆ ಏನು ಉತ್ತರಕೊಡಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುತ್ತೇನೆ.</verse>
				<verse number="5">ಒಂದು ಸಾರಿ ಮಾತಾಡಿದೆ, ಈಗ ನನಗೆ ಕೊಡುವುದಕ್ಕೆ ಉತ್ತರ ಇಲ್ಲ; ಮತ್ತೆ ಮಾತಾಡುತ್ತಿದ್ದೇನೆ, ಆದರೆ ಮಾತಾಡಲು ನನಗೆ ಇನ್ನೇನೂ ಇಲ್ಲ,” ಎಂದನು.</verse>
				<verse number="6">ಆಗ ಯೆಹೋವ ದೇವರು ಬಿರುಗಾಳಿಯೊಳಗಿಂದ ಯೋಬನಿಗೆ ಉತ್ತರಕೊಟ್ಟು ಹೇಳಿದ್ದೇನೆಂದರೆ:</verse>
				<verse number="7">“ಈಗ ಶೂರನಂತೆ ನಿನ್ನ ನಡು ಕಟ್ಟಿಕೋ; ನಾನು ನಿನಗೆ ಪ್ರಶ್ನೆಮಾಡುತ್ತೇನೆ; ನೀನು ನನಗೆ ಉತ್ತರಕೊಡು.</verse>
				<verse number="8">“ನನ್ನ ನ್ಯಾಯವನ್ನು ನೀನು ಅಪಕೀರ್ತಿ ಮಾಡುತ್ತೀಯೋ? ನೀನು ನಿನ್ನ ನ್ಯಾಯವನ್ನು ಸ್ಥಾಪಿಸಲು ನನ್ನನ್ನು ಅಪರಾಧಿ ಎಂದು ನಿರ್ಣಯಿಸುತ್ತೀಯೋ?</verse>
				<verse number="9">ದೇವರಾದ ನನಗಿರುವ ಭುಜಬಲ ನಿನಗಿದೆಯೋ? ನನ್ನ ಧ್ವನಿಯ ಹಾಗೆ ನೀನು ಗುಡುಗಬಲ್ಲೆಯೋ?</verse>
				<verse number="10">ಹಾಗಾದರೆ, ಮಹಿಮೆ ಘನತೆಗಳಿಂದ ನಿನ್ನನ್ನು ಅಲಂಕರಿಸಿಕೋ; ನೀನು ಗೌರವ ಪ್ರಭಾವಗಳನ್ನೂ ಧರಿಸಿಕೋ.</verse>
				<verse number="11">ನಿನ್ನ ಕಡುಕೋಪವನ್ನು ಎಲ್ಲಾ ಗರ್ವಿಷ್ಠರ ಮೇಲೆ ಸುರಿಸಿ, ಅವರನ್ನು ತಗ್ಗಿಸು.</verse>
				<verse number="12">ಹೌದು, ಗರ್ವಿಷ್ಠರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರು ನಿಂತಿರುವ ಸ್ಥಳದಲ್ಲಿಯೇ ಕೆಡವಿಬಿಡು.</verse>
				<verse number="13">ಅವರೆಲ್ಲರನ್ನು ಒಟ್ಟಾಗಿ ಧೂಳಿನಲ್ಲಿ ಅಡಗಿಸಿಬಿಡು; ಅಂಧಕಾರ ಲೋಕದಲ್ಲಿ ಅವರ ಮುಖಕ್ಕೆ ಮುಸುಕುಹಾಕು.</verse>
				<verse number="14">ನೀನು ಹಾಗೆ ಮಾಡಿದರೆ, ನಿನ್ನ ಬಲ ನಿನ್ನನ್ನು ರಕ್ಷಿಸಬಲ್ಲದೆಂದು ನಾನೇ ಒಪ್ಪಿಕೊಳ್ಳುವೆನು.</verse>
				<verse number="15">“ನಾನು ನಿನ್ನ ಹಾಗೆ ಸೃಷ್ಟಿಮಾಡಿದ ನೀರಾನೆಯನ್ನು ನೋಡು; ಅದು ಎತ್ತಿನ ಹಾಗೆ ಹುಲ್ಲನ್ನು ತಿನ್ನುತ್ತದೆ.</verse>
				<verse number="16">ಅದರ ಸೊಂಟದಲ್ಲಿ ಎಂಥಾ ಬಲ ಅಡಕವಾಗಿದೆ. ಅದರ ಹೊಟ್ಟೆಯ ನರಗಳಲ್ಲಿ ಸಹ ಎಂಥಾ ಶಕ್ತಿಯಿದೆ!</verse>
				<verse number="17">ನೀರಾನೆಯು ತನ್ನ ಬಾಲವನ್ನು ದೇವದಾರು ಮರದಂತೆ ಬಗ್ಗಿಸುತ್ತದೆ; ಅದರ ತೊಡೆಯ ನರಗಳೋ ಹೆಣೆದುಕೊಂಡಿವೆ.</verse>
				<verse number="18">ಅದರ ಮೂಳೆಗಳು ಕಂಚಿನ ಸಲಿಕೆಗಳಂತೆ ಬಲವಾಗಿವೆ; ಅದರ ಕೈಕಾಲುಗಳು ಕಬ್ಬಿಣದ ಕಂಬಿಗಳ ಹಾಗೆ ಇರುತ್ತವೆ.</verse>
				<verse number="19">ದೇವರ ಸೃಷ್ಟಿಗಳಲ್ಲಿ ಅದು ಮುಖ್ಯವಾದದ್ದು; ಸೃಷ್ಟಿಕರ್ತ ದೇವರು ಅದಕ್ಕೆ ಕೋರೆಹಲ್ಲಿನ ಖಡ್ಗವನ್ನು ಒದಗಿಸಿದ್ದಾರೆ.</verse>
				<verse number="20">ಪರ್ವತಗಳಲ್ಲಿ ಅದಕ್ಕೆ ಮೇವು ಸಿಗುತ್ತದೆ; ಎಲ್ಲಾ ಕಾಡುಮೃಗಗಳು ಅಲ್ಲಿ ಆಡುತ್ತವೆ.</verse>
				<verse number="21">ನೀರಾನೆಯು ತಾವರೆ ಗಿಡಗಳಡಿಯಲ್ಲಿಯೂ ಆಪಿನ ಮರೆಯಲ್ಲಿಯೂ, ಜವುಗು ಭೂಮಿಯಲ್ಲಿಯೂ ವಿಶ್ರಮಿಸಿಕೊಳ್ಳುತ್ತದೆ.</verse>
				<verse number="22">ತಾವರೆ ಎಲೆಗಳು ನೆರಳನ್ನು ಅದಕ್ಕೆ ಹರಡುತ್ತವೆ; ನದಿಯ ನೀರವಂಜಿ ಮರಗಳು ಅದನ್ನು ಸುತ್ತಿಕೊಳ್ಳುತ್ತವೆ.</verse>
				<verse number="23">ಹೊಳೆ ಉಕ್ಕಿ ಬಂದರೂ ನೀರಾನೆಯು ಹೆದರುವುದಿಲ್ಲ. ಯೊರ್ದನ್ ನದಿ ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು.</verse>
				<verse number="24">ಅದು ನೋಡುತ್ತಿರುವಾಗ ಯಾರಾದರೂ ಅದನ್ನು ಹಿಡಿಯಬಲ್ಲರೋ? ಅದರ ಮೂಗನ್ನು ಗಾಳದಿಂದ ಚುಚ್ಚಬಲ್ಲರೋ?</verse>
			</chapter>
			<chapter number="41">
				<verse number="1">“ಯೋಬನೇ, ಲಿವ್ಯಾತಾನ್ ಮೊಸಳೆಯನ್ನು ಗಾಳದಿಂದ ಎಳೆಯಬಲ್ಲೆಯಾ? ಹಗ್ಗದಿಂದ ಅದರ ನಾಲಿಗೆಯನ್ನು ಬಿಗಿಯಬಲ್ಲೆಯಾ?</verse>
				<verse number="2">ಅದರ ಮೂಗಿನಲ್ಲಿ ಗಾಳ ಇಡುವೆಯಾ? ಅದರ ದವಡೆಗೆ ಮುಳ್ಳಿನಿಂದ ಚುಚ್ಚುವೆಯಾ?</verse>
				<verse number="3">ಅದು ಅನೇಕ ಸಾರಿ ಕರುಣೆಗಾಗಿ ನಿನಗೆ ವಿಜ್ಞಾಪನೆಮಾಡಿತೇ? ನಿನ್ನ ಸಂಗಡ ನಮ್ರತೆಯಿಂದ ಮಾತನಾಡೀತೇ?</verse>
				<verse number="4">ನೀನು ಅದನ್ನು ಇಡೀ ಜೀವಮಾನಕ್ಕೂ ಆಳಾಗಿ ಸೇರಿಸಿಕೊಳ್ಳುವಂತೆ, ನಿನ್ನೊಂದಿಗೆ ಒಡಂಬಡಿಕೆ ಮಾಡಿಕೊಂಡೀತೆ?</verse>
				<verse number="5">ಸಾಕುಪಕ್ಷಿಯಂತೆ ಅದನ್ನು ಆಡಿಸಬಲ್ಲೆಯಾ? ಮನೆಯಲ್ಲಿರುವ ನಿನ್ನ ಹುಡುಗಿಯರ ವಿನೋದಕ್ಕಾಗಿ ಅದನ್ನು ಕಟ್ಟಿ ಹಾಕಬಲ್ಲೆಯಾ?</verse>
				<verse number="6">ಬೆಸ್ತರು ಅದಕ್ಕಾಗಿ ವ್ಯಾಪಾರ ಒಪ್ಪಂದ ಮಾಡುತ್ತಾರೆಯೆ? ಅವರು ಅದನ್ನು ವರ್ತಕರಲ್ಲಿ ಹಂಚಿ ಮಾರುವರೆ?</verse>
				<verse number="7">ಆ ಮೊಸಳೆಯ ಚರ್ಮವನ್ನು ಮುಳ್ಳುಗಳಿಂದ ಚುಚ್ಚಬಲ್ಲೆಯಾ? ಅದರ ತಲೆಯನ್ನು ಮೀನು ಹಿಡಿಯುವ ಈಟಿಯಿಂದ ತಿವಿಯಬಲ್ಲೆಯಾ?</verse>
				<verse number="8">ಅದರ ಮೇಲೆ ನಿನ್ನ ಕೈಹಾಕಿ ನೋಡು! ಆ ಹೋರಾಟವನ್ನು ನೆನೆಸಿಕೊಂಡರೆ, ನೀನು ಮತ್ತೆ ಅದನ್ನು ಮುಟ್ಟುವುದೇ ಇಲ್ಲ!</verse>
				<verse number="9">ಅದನ್ನು ಹಿಡಿಯಬಹುದೆಂಬ ನಿರೀಕ್ಷೆಯು ವ್ಯರ್ಥವಾದದ್ದು; ಹಿಡಿಯ ಬಂದವನು ನೋಡಿದ ಮಾತ್ರಕ್ಕೆ ಹೆದರಿ ಬಿದ್ದುಹೋಗುವನು.</verse>
				<verse number="10">ಅದನ್ನು ಕೆಣಕಲು ಧೈರ್ಯಗೊಳ್ಳುವಷ್ಟು ಉಗ್ರತೆ ಯಾರಲ್ಲಿಯೂ ಇಲ್ಲ; ಹೀಗಿರುವಾಗ, ನನಗೆ ಎದುರಾಗಿ ನಿಲ್ಲಲು ಶಕ್ತರು ಯಾರು?</verse>
				<verse number="11">ನಾನು ಸಾಲ ತೀರಿಸಬೇಕೆಂದು ನನಗೆ ವಿರೋಧವಾಗಿ ಹಕ್ಕು ಸಾಧಿಸುವವರು ಯಾರು? ಆಕಾಶದ ಕೆಳಗೆ ಇರುವಂಥ ಪ್ರತಿಯೊಂದೂ ನನ್ನದೇ.</verse>
				<verse number="12">“ನಾನು ಲಿವ್ಯಾತಾನ್ ಮೊಸಳೆಯ ದೇಹದ ಭಾಗಗಳನ್ನೂ ಬಲವನ್ನೂ, ಅದರ ಆಕರ್ಷಕ ಸೊಬಗನ್ನೂ ವರ್ಣಿಸದೆ ಸುಮ್ಮನಿರಲಾರೆನು.</verse>
				<verse number="13">ಅದರ ಹೊರ ವಸ್ತ್ರವನ್ನು ತೆಗೆಯಬಲ್ಲವರು ಯಾರು? ಅದರ ಜೋಡು ದವಡೆಗಳೊಳಗೆ ಕಡಿವಾಣದಿಂದ ನುಗ್ಗಬಲ್ಲವರು ಯಾರು?</verse>
				<verse number="14">ಅದರ ಮುಖದ ಕದಗಳನ್ನು ತೆರೆಯಬಲ್ಲವರು ಯಾರು? ಅದರ ಹಲ್ಲುಗಳ ಸುತ್ತಲೂ ಭಯಭೀತಿ ಆವರಿಸಿರುವುದು.</verse>
				<verse number="15">ಗುರಾಣಿಗಳ ಸಾಲುಗಳು ಅದರ ಬೆನ್ನಿಗೆ ಹೆಮ್ಮೆಯಾಗಿವೆ; ಅವು ಒಟ್ಟಿಗೆ ಬಿಗಿಯಾಗಿ ಮುದ್ರಿಸಲಾಗಿವೆ.</verse>
				<verse number="16">ಗಾಳಿಯೂ ಅವುಗಳ ನಡುವೆ ನುಗ್ಗದಂತೆ, ಒಂದಕ್ಕೊಂದು ಹೊಂದಿಕೊಂಡಿವೆ.</verse>
				<verse number="17">ಆ ಅಡ್ಡಣಗಳು ಒಂದಕ್ಕೊಂದು ಅಂಟಿಕೊಂಡಿವೆ; ಪ್ರತ್ಯೇಕಿಸಲಾಗದಂತೆ ಹಿಡಿದುಕೊಂಡಿವೆ.</verse>
				<verse number="18">ಅದರ ಸೀನಿನ ತುಂತುರುಗಳು ಬೆಳಕಿನ ಹೊಳಪನ್ನು ಹೊರಹಾಕುವುದು; ಅದರ ಕಣ್ಣುಗಳು ಉದಯದ ಕಿರಣಗಳ ಹಾಗೆ ಇವೆ.</verse>
				<verse number="19">ಅದರ ಬಾಯಿಂದ ಉರಿಯುವ ದೀಪಗಳು ಹೊರಡುತ್ತವೆ; ಬೆಂಕಿಯ ಕಿಡಿಗಳು ಹಾರುತ್ತವೆ.</verse>
				<verse number="20">ಆಪುಹುಲ್ಲಿಗೆ ಬೆಂಕಿಯಿಟ್ಟಾಗ ಕುದಿಯುವ ಪಾತ್ರೆಯೊಳಗಿಂದ ಆವಿ ಬರುವಂತೆ, ಅದರ ಮೂಗಿನೊಳಗಿಂದ ಹೊಗೆ ಹಾಯುವುದು.</verse>
				<verse number="21">ಅದರ ಶ್ವಾಸವೇ ಇದ್ದಲನ್ನು ಹೊತ್ತಿಸುವುದು; ಜ್ವಾಲೆಯು ಅದರ ಬಾಯಿಯೊಳಗಿಂದ ಹೊರಡುವುದು.</verse>
				<verse number="22">ಅದರ ಬಲವು ಕುತ್ತಿಗೆಯಲ್ಲಿ ನೆಲೆಗೊಂಡಿರುವುದು; ಅದರ ಮುಂದೆ ಭಯವು ಸಾಗುತ್ತಿರುವುದು.</verse>
				<verse number="23">ಅದರ ಮಾಂಸದ ಖಂಡಗಳು ಒಟ್ಟಾಗಿ ಕೂಡಿಕೊಂಡಿವೆ; ಅವು ಸ್ಥಿರವಾಗಿದ್ದು ಕದಲದೆ ಇರುತ್ತವೆ.</verse>
				<verse number="24">ಅದರ ಹೃದಯವು ಬಂಡೆಯಂತೆಯೂ, ಬೀಸುವ ಕೆಳಗಲ್ಲಿನಂತೆಯೂ ಗಟ್ಟಿಯಾಗಿದೆ.</verse>
				<verse number="25">ಅದು ಎದ್ದರೆ ಶೂರರು ಸಹ ಹೆದರುತ್ತಾರೆ; ಅದರ ಹೊಡೆತಕ್ಕೆ ಭಯಭ್ರಾಂತರಾಗಿ ಹಿಂಜರಿಯುವರು.</verse>
				<verse number="26">ಖಡ್ಗದಿಂದ ಹೊಡೆದರೆ ಅದಕ್ಕೇನೂ ಆಗುವುದಿಲ್ಲ; ಭರ್ಜಿ, ಬಾಣ, ಕವಚ ಇವುಗಳಿಂದಲೂ ಅದಕ್ಕೆ ಏನು ಆಗುವುದಿಲ್ಲ.</verse>
				<verse number="27">ಕಬ್ಬಿಣವು ಅದಕ್ಕೆ ಒಣಹುಲ್ಲಿನಂತೆಯೂ, ಕಂಚು ಅದಕ್ಕೆ ಕೊಳೆತ ಕಟ್ಟಿಗೆಯಂತೆಯೂ ಇರುವುದು.</verse>
				<verse number="28">ಲಿವ್ಯಾತಾನ್ ಮೊಸಳೆಯನ್ನು ಬಿಲ್ಲುಬಾಣಗಳು ಓಡಿಸಲು ಅಸಾಧ್ಯ; ಕವಣೆಯ ಕಲ್ಲು ಅದಕ್ಕೆ ಹೊಟ್ಟಿಗೆ ಸಮಾನ.</verse>
				<verse number="29">ದೊಣ್ಣೆಗಳು ಅದಕ್ಕೆ ಒಣಹುಲ್ಲಿನ ಹಾಗೆ ಇರುವುದು; ಭರ್ಜಿ ಅದಕ್ಕೆ ತಾಕಿದರೆ, ಅದು ನಗುವುದು.</verse>
				<verse number="30">ಅದರ ಹೊಟ್ಟೆಯ ಅಡಿಯಲ್ಲಿ ಚೂಪಾದ ಒಡೆದ ಮಡಕೆಗಳಂತಿವೆ, ಅದು ಕೆಸರಿನ ಮೇಲೆ ತೆನೆಬಡಿಯುವ ಯಂತ್ರದಿಂದ ಆಗುವ ಗುರುತಿನಂತಿರುವುದು.</verse>
				<verse number="31">ಅದು ಆಳವಾದ ನೀರನ್ನು ಕುದಿಯುವ ಹಂಡೆಯ ನೀರಿನಂತೆ ಕಲಕುವುದು; ಸಮುದ್ರವನ್ನು ತೈಲದ ಪಾತ್ರೆಯ ಹಾಗೆಯೂ ಕದಲಿಸುವುದು.</verse>
				<verse number="32">ಸಾಗರಕ್ಕೆ ನೆರೆ ಬಂತೋ ಎಂಬಂತೆ, ಅದು ತಾನು ಬಂದ ಹಾದಿಯನ್ನೇ ಬೆಳ್ಳಗಾಗುವಂತೆ ಮಾಡುವುದು.</verse>
				<verse number="33">ಭೂಮಿಯ ಮೇಲೆ ಇದಕ್ಕೆ ಸಮಾನವಾದದ್ದು ಇಲ್ಲ; ಇದು ಭಯಭೀತಿಯಿಲ್ಲದ ಸೃಷ್ಟಿ.</verse>
				<verse number="34">ಇದು ಪ್ರತಿ ಅಹಂಕಾರಿಯನ್ನು ನೋಡುವುದು; ಗರ್ವಪಡುವ ಎಲ್ಲರ ಮೇಲೆ ಇದು ರಾಜನಾಗಿರುವುದು.”</verse>
			</chapter>
			<chapter number="42">
				<verse number="1">ಆಗ ಯೋಬನು ಯೆಹೋವ ದೇವರಿಗೆ ಕೊಟ್ಟ ಉತ್ತರ:</verse>
				<verse number="2">“ತಮಗೆ ಎಲ್ಲಾ ಕಾರ್ಯಗಳನ್ನು ಮಾಡಲು ಸಾಧ್ಯ ಎಂದು ನಾನು ಬಲ್ಲೆ; ತಮ್ಮ ಯಾವ ಉದ್ದೇಶವನ್ನೂ ಅಡ್ಡಿಮಾಡಲು ಸಾಧ್ಯವಿಲ್ಲ ಎಂಬುದನ್ನು ಸಹ ತಿಳಿದಿದ್ದೇನೆ.</verse>
				<verse number="3">‘ತಿಳುವಳಿಕೆಯಿಲ್ಲದೆ ನನ್ನ ಯೋಜನೆಯನ್ನು ಮಂಕುಮಾಡುವ ನೀನು ಯಾರು?’ ಎಂದು ತಾವು ಪ್ರಶ್ನಿಸಿದ್ದೀರಿ. ನಿಶ್ಚಯವಾಗಿ, ತಾವು ಹೇಳಿದಂತೆ ನನಗೆ ಅರ್ಥವಾಗದವುಗಳನ್ನು ಮಾತಾಡಿಬಿಟ್ಟೆ, ನನಗೆ ತಿಳಿಯದ ಸಂಗತಿಗಳನ್ನೂ ನನ್ನ ಬುದ್ಧಿಗೆ ಮೀರಿದ ಅದ್ಭುತಗಳನ್ನೂ ಕುರಿತು ಟೀಕಿಸಿಬಿಟ್ಟೆ.</verse>
				<verse number="4">“ತಾವು ನನಗೆ, ‘ನಾನು ನಿನ್ನನ್ನು ಪ್ರಶ್ನೆಮಾಡುವೆನು; ನೀನೇ ನನಗೆ ಉತ್ತರಕೊಡು,’ ಎಂದು ಅಪ್ಪಣೆ ಕೊಟ್ಟಿದ್ದೀರಿ.</verse>
				<verse number="5">ಇದುವರೆಗೆ ತಮ್ಮನ್ನು ಕುರಿತು ನಾನು ಬೇರೆಯವರಿಂದ ಕೇಳಿದ್ದೆ; ಆದರೆ ಈಗ ತಮ್ಮನ್ನು ಕಣ್ಣಾರೆ ಕಂಡಿದ್ದೇನೆ.</verse>
				<verse number="6">ಆದ್ದರಿಂದ ನಾನು ಹೇಳಿದ್ದನ್ನೆಲ್ಲಾ ಹಿಂತೆಗೆದುಕೊಂಡು, ಧೂಳಿನಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ,” ಎಂದನು.</verse>
				<verse number="7">ಯೆಹೋವ ದೇವರು ಯೋಬನ ಸಂಗಡ ಮಾತಾಡಿದ ತರುವಾಯ, ತೇಮಾನ್ಯನಾದ ಎಲೀಫಜನಿಗೆ, “ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ನನಗೆ ಕೋಪವಿದೆ. ಏಕೆಂದರೆ ನೀವು ನನ್ನ ದಾಸನಾದ ಯೋಬನಂತೆ ನೀವು ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ.</verse>
				<verse number="8">ಆದುದರಿಂದ ಈಗ ನೀವು ಏಳು ಹೋರಿಗಳನ್ನು, ಏಳು ಟಗರುಗಳನ್ನು ತೆಗೆದುಕೊಂಡು ನನ್ನ ದಾಸನಾದ ಯೋಬನ ಬಳಿಗೆ ಬನ್ನಿರಿ. ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ; ನನ್ನ ದಾಸನಾದ ಯೋಬನು ನಿಮ್ಮ ಪರವಾಗಿ ಪ್ರಾರ್ಥನೆಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ದಂಡಿಸದಂತೆ, ಅವನ ಪ್ರಾರ್ಥನೆಯನ್ನು ಸ್ವೀಕರಿಸುವೆನು. ನೀವು ನನ್ನ ದಾಸನಾದ ಯೋಬನಂತೆ ನನ್ನ ವಿಷಯವಾಗಿ ಸತ್ಯವನ್ನು ಆಡಲಿಲ್ಲ,” ಎಂದು ಹೇಳಿದರು.</verse>
				<verse number="9">ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು ಮತ್ತು ನಾಮಾಥ್ಯನಾದ ಚೋಫರನು ಹೋಗಿ ಯೆಹೋವ ದೇವರು ತಮಗೆ ಹೇಳಿದಂತೆ ಮಾಡಿದರು. ಯೆಹೋವ ದೇವರು ಯೋಬನ ಪ್ರಾರ್ಥನೆಯನ್ನು ಸ್ವೀಕರಿಸಿದರು.</verse>
				<verse number="10">ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದ ತರುವಾಯ ಯೆಹೋವ ದೇವರು ಅವನ ಸಂಪತ್ತನ್ನು ಪುನಃಸ್ಥಾಪಿಸಿದರು. ಯೆಹೋವ ದೇವರು ಯೋಬನಿಗೆ ಮೊದಲು ಇದ್ದವುಗಳಿಗಿಂತ ಎರಡರಷ್ಟು ಕೊಟ್ಟರು.</verse>
				<verse number="11">ಆಗ ಯೋಬನ ಎಲ್ಲಾ ಸಹೋದರರು, ಸಹೋದರಿಯರು, ಹಿಂದಿನ ಪರಿಚಿತರೆಲ್ಲರೂ ಅವನ ಬಳಿಗೆ ಬಂದರು. ಅವರು ಯೋಬನ ಸಂಗಡ ಅವನ ಮನೆಯಲ್ಲಿ ಊಟಮಾಡಿ, ಯೆಹೋವ ದೇವರು ಅವನ ಮೇಲೆ ಬರಮಾಡಿದ ಎಲ್ಲಾ ಆಪತ್ತಿಗಾಗಿ ಸಂತಾಪ ವ್ಯಕ್ತಪಡಿಸಿ ಅವನನ್ನು ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಯೋಬನಿಗೆ ಕೊಟ್ಟರು.</verse>
				<verse number="12">ಇದಲ್ಲದೆ ಯೆಹೋವ ದೇವರು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಅಧಿಕವಾಗಿ ಆಶೀರ್ವದಿಸಿದರು. ಯೋಬನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಕತ್ತೆಗಳೂ ದೊರಕಿದವು.</verse>
				<verse number="13">ಅವನಿಗೆ ಏಳು ಪುತ್ರರೂ ಮೂರು ಪುತ್ರಿಯರೂ ಹುಟ್ಟಿದರು.</verse>
				<verse number="14">ಯೋಬನು ಮೊದಲನೆಯವಳಿಗೆ ಯೆಮೀಮಳೆಂದೂ ಎರಡನೆಯವಳಿಗೆ ಕೆಚೀಯಳೆಂದೂ ಮೂರನೆಯವಳಿಗೆ ಕೆರೆನ್ ಹಪ್ಪೂಕ್ ಎಂದೂ ಹೆಸರಿಟ್ಟನು.</verse>
				<verse number="15">ಯೋಬನ ಪುತ್ರಿಯರ ಹಾಗೆ ಸೌಂದರ್ಯವತಿಯರು ದೇಶದಲ್ಲೆಲ್ಲೂ ಇರಲಿಲ್ಲ. ಅವರ ತಂದೆ ಅವರ ಅಣ್ಣತಮ್ಮಂದಿರಿಗೆ ಕೊಟ್ಟಹಾಗೆ ಅವರಿಗೂ ಸೊತ್ತನ್ನು ಹಂಚಿದನು.</verse>
				<verse number="16">ತರುವಾಯ ಯೋಬನು ನೂರ ನಾಲ್ವತ್ತು ವರ್ಷ ಬಾಳಿದನು. ನಾಲ್ಕನೆಯ ತಲೆಮಾರು ತನಕ ಮಕ್ಕಳನ್ನೂ ಮೊಮ್ಮಕ್ಕಳನ್ನೂ ಕಂಡನು.</verse>
				<verse number="17">ಅನಂತರ ಯೋಬನು, ದಿನತುಂಬಿದ ಮುದುಕನಾಗಿ ಸತ್ತನು.</verse>
			</chapter>
		</book>
		<book number="19">
			<chapter number="1">
				<verse number="1">ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಿಗಳ ಮಾರ್ಗದಲ್ಲಿ ನಿಲ್ಲದೆ, ಅಪಹಾಸ್ಯಗಾರರ ಕೂಟದಲ್ಲಿ ಕೂತುಕೊಳ್ಳದೆ,</verse>
				<verse number="2">ಯೆಹೋವ ದೇವರ ನಿಯಮದಲ್ಲಿ ಆನಂದಿಸುತ್ತಾ, ದೇವರ ನಿಯಮವನ್ನು ರಾತ್ರಿ ಹಗಲು ಧ್ಯಾನಿಸುತ್ತಾ ಬದುಕುವವರು ಧನ್ಯರು.</verse>
				<verse number="3">ಅಂಥವರು ನೀರಿನ ಕಾಲುವೆಗಳ ಬಳಿಯಲ್ಲಿ ನೆಟ್ಟಿರುವ, ಮರದ ಹಾಗಿರುವರು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದೆ, ಅದರ ಎಲೆ ಉದುರುವುದೇ ಇಲ್ಲ. ಅದರಂತೆ ಅವರು ಮಾಡುವ ಕಾರ್ಯವೆಲ್ಲವೂ ಸಫಲವಾಗುವುದು.</verse>
				<verse number="4">ಆದರೆ ದುಷ್ಟರು ಹಾಗಲ್ಲ! ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೇ ಇದ್ದಾರೆ.</verse>
				<verse number="5">ಆದ್ದರಿಂದ ದುಷ್ಟರು ನ್ಯಾಯತೀರ್ಪಿಗೆ ಒಳಗಾಗುವರು, ಪಾಪಿಗಳಿಗೆ ನೀತಿವಂತರ ಸಭೆಯಲ್ಲಿ ಸ್ಥಳವಿರುವುದಿಲ್ಲ.</verse>
				<verse number="6">ಯೆಹೋವ ದೇವರು ನೀತಿವಂತರ ಮಾರ್ಗವನ್ನು ಅರಿತಿದ್ದಾರೆ; ಆದರೆ ದುಷ್ಟರ ಮಾರ್ಗವು ನಾಶಕ್ಕೆ ನಡೆಸುವುದು.</verse>
			</chapter>
			<chapter number="2">
				<verse number="1">ರಾಷ್ಟ್ರಗಳು ಒಳಸಂಚು ಮಾಡುವುದೂ ಜನಾಂಗಗಳು ವ್ಯರ್ಥವಾಗಿ ಕುತಂತ್ರ ಮಾಡುವುದೂ ಏಕೆ?</verse>
				<verse number="2">ಯೆಹೋವ ದೇವರಿಗೂ ಅವರ ಅಭಿಷಿಕ್ತನಿಗೂ ವಿರೋಧವಾಗಿ, ಭೂಲೋಕದ ಅರಸರು ನಿಂತುಕೊಳ್ಳುತ್ತಾರೆ. ಅಧಿಪತಿಗಳೂ ಒಂದಾಗಿ ಕೂಡಿಕೊಳ್ಳುತ್ತಿರುವರು.</verse>
				<verse number="3">“ಅವರು ಹಾಕಿದ ಬೇಡಿಗಳನ್ನು ಮುರಿದು ಬಂಧಗಳನ್ನು ಹರಿದು ಬೀಸಾಡೋಣ,” ಎನ್ನುತ್ತಾರೆ.</verse>
				<verse number="4">ಪರಲೋಕದಲ್ಲಿ ಕೂತಿರುವ ದೇವರು ಅದಕ್ಕೆ ನಗುವರು, ಕರ್ತದೇವರು ಅವರನ್ನು ಕಂಡು ಅಪಹಾಸ್ಯ ಮಾಡುವರು.</verse>
				<verse number="5">ಕರ್ತದೇವರು ತಮ್ಮ ಕೋಪದಿಂದ ಅವರನ್ನು ಗದರಿಸುತ್ತಾ, ತಮ್ಮ ಬೇಸರದಿಂದ ಅವರನ್ನು ಕಳವಳಪಡಿಸಿ ಹೀಗೆ ಹೇಳುವರು,</verse>
				<verse number="6">“ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.”</verse>
				<verse number="7">ನಾನು ಯೆಹೋವ ದೇವರ ತೀರ್ಪನ್ನು ಹೀಗೆ ಪ್ರಕಟಿಸುವೆನು: ಅವರು ನನಗೆ ಹೇಳಿದ್ದು, “ನೀನು ನನ್ನ ಪುತ್ರನು; ಇಂದು ನಾನು ನಿನ್ನ ತಂದೆಯಾಗಿದ್ದೇನೆ.</verse>
				<verse number="8">ನನ್ನನ್ನು ಕೇಳು, ಆಗ ನಾನು ರಾಷ್ಟ್ರಗಳನ್ನು ನಿನ್ನ ವಾರಸಾಗಿಯೂ, ಭೂಮಿಯ ಕಟ್ಟಕಡೆಯವರೆಗೂ ಇರುವ ದೇಶಗಳನ್ನೂ ನಿಮ್ಮ ಸೊತ್ತಾಗಿಯೂ ಕೊಡುವೆನು.</verse>
				<verse number="9">ಕಬ್ಬಿಣದ ಗದೆಯಿಂದ ನೀನು ಅವರನ್ನು ದಂಡಿಸಿ, ಮಣ್ಣಿನ ಮಡಕೆಯಂತೆ ಚೂರುಚೂರಾಗಿ ಅವರನ್ನು ಒಡೆದುಹಾಕುವೆ.”</verse>
				<verse number="10">ಆದ್ದರಿಂದ, ರಾಜರುಗಳೇ, ಈಗ ಜ್ಞಾನವಂತರಾಗಿರಿ. ಭೂಲೋಕದ ಅಧಿಕಾರಿಗಳೇ, ಎಚ್ಚರಿಕೆಯಿಂದಿರಿ.</verse>
				<verse number="11">ಭಯಭಕ್ತಿಯಿಂದ ಯೆಹೋವ ದೇವರ ಸೇವೆಮಾಡಿರಿ, ನಡುಗುತ್ತಾ ಅವರ ಆಳ್ವಿಕೆಯಲ್ಲಿ ಉಲ್ಲಾಸಪಡಿರಿ.</verse>
				<verse number="12">ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು.</verse>
			</chapter>
			<chapter number="3">
				<verse number="1">ಯೆಹೋವ ದೇವರೇ, ನನ್ನ ವೈರಿಗಳು ಬಹುಜನ! ನನಗೆ ವಿರೋಧವಾಗಿ ಏಳುವವರು ಎಷ್ಟೋ ಜನ!</verse>
				<verse number="2">“ದೇವರು ಅವನನ್ನು ಬಿಡುಗಡೆ ಮಾಡುವುದಿಲ್ಲ,” ಎಂದು ಅನೇಕರು ನನ್ನ ಬಗ್ಗೆ ಹೇಳುತ್ತಾರೆ.</verse>
				<verse number="3">ಆದರೆ ಯೆಹೋವ ದೇವರೇ, ನೀವೇ ನನ್ನ ಸುತ್ತಲಿರುವ ಗುರಾಣಿಯೂ, ನನ್ನ ಮಹಿಮೆಯೂ ನನ್ನ ತಲೆ ಮೇಲೆತ್ತುವವರೂ ಆಗಿದ್ದೀರಿ.</verse>
				<verse number="4">ನಾನು ನನ್ನ ಧ್ವನಿಯೆತ್ತಿ ಯೆಹೋವ ದೇವರಿಗೆ ಮೊರೆಯಿಡುವೆನು, ಅವರು ತಮ್ಮ ಪರಿಶುದ್ಧ ಪರ್ವತದಿಂದ ನನಗೆ ಉತ್ತರಕೊಡುವರು.</verse>
				<verse number="5">ನಾನು ಮಲಗಿ ನಿದ್ರಿಸುವೆನು; ಯೆಹೋವ ದೇವರು ನನ್ನನ್ನು ಕಾಪಾಡಿದ್ದರಿಂದ ನಾನು ಎಚ್ಚರಗೊಂಡೆನು.</verse>
				<verse number="6">ಸಾವಿರಾರು ಜನರು ನನಗೆ ವಿರೋಧವಾಗಿ ನನ್ನ ಸುತ್ತುವರಿದರೂ ನಾನು ಭಯಪಡೆನು.</verse>
				<verse number="7">ಯೆಹೋವ ದೇವರೇ, ಏಳಿರಿ! ನನ್ನ ದೇವರೇ, ನನ್ನನ್ನು ರಕ್ಷಿಸಿರಿ. ನನ್ನ ಶತ್ರುಗಳೆಲ್ಲರ ದವಡೆಗೆ ಹೊಡೆಯಿರಿ; ದುಷ್ಟರ ಹಲ್ಲುಗಳನ್ನು ಮುರಿದುಬಿಡಿರಿ.</verse>
				<verse number="8">ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು. ನಿಮ್ಮ ಜನರ ಮೇಲೆ ನಿಮ್ಮ ಆಶೀರ್ವಾದವಿರಲಿ.</verse>
			</chapter>
			<chapter number="4">
				<verse number="1">ನನ್ನ ನೀತಿಯಾಗಿರುವ ದೇವರೇ, ನಾನು ಕರೆಯುವಾಗ ನನಗೆ ಸದುತ್ತರವನ್ನು ಕೊಡಿರಿ. ನನ್ನ ಸಂಕಟದಿಂದ ನನಗೆ ನೆಮ್ಮದಿಯನ್ನು ನೀಡಿರಿ; ನನ್ನನ್ನು ಕರುಣಿಸಿ, ನನ್ನ ಪ್ರಾರ್ಥನೆಯನ್ನು ಕೇಳಿರಿ.</verse>
				<verse number="2">ಓ ಮಾನವ, ನೀನು ಎಲ್ಲಿಯತನಕ ನನ್ನ ಮಹಿಮೆಯನ್ನು ಅವಮಾನಕ್ಕೆ ಗುರಿಪಡಿಸುವಿ? ನೀನು ಎಲ್ಲಿಯತನಕ ವ್ಯರ್ಥವಾದದ್ದನ್ನು ಪ್ರೀತಿಸಿ, ಸುಳ್ಳನ್ನು ಹುಡುಕುವಿ?</verse>
				<verse number="3">ಯೆಹೋವ ದೇವರು ತಮ್ಮ ನಂಬಿಗಸ್ತರನ್ನು ತಮಗಾಗಿ ಪ್ರತ್ಯೇಕಿಸಿದ್ದಾರೆ ಎಂದು ತಿಳಿದುಕೊಳ್ಳಿರಿ; ನಾನು ಬೇಡಿಕೊಳ್ಳಲು ಯೆಹೋವ ದೇವರು ನನಗೆ ಉತ್ತರ ನೀಡುವರು.</verse>
				<verse number="4">ನಡುಗಿರಿ, ಪಾಪಮಾಡಬೇಡಿರಿ; ನೀವು ನಿಮ್ಮ ಹಾಸಿಗೆಯ ಮೇಲೆ ಇರುವಾಗ, ನಿಮ್ಮ ಹೃದಯಗಳಲ್ಲಿ ಧ್ಯಾನಮಾಡಿ ಮೌನವಾಗಿರಿ.</verse>
				<verse number="5">ನೀತಿಯ ಬಲಿಗಳನ್ನು ಅರ್ಪಿಸಿರಿ ಯೆಹೋವ ದೇವರಲ್ಲಿ ನಿಮ್ಮ ಭರವಸೆಯನ್ನು ಇಡಿರಿ.</verse>
				<verse number="6">ಯೆಹೋವ ದೇವರೇ, “ನಮಗೆ ಒಳ್ಳೆಯದನ್ನು ಮಾಡುವವರು ಯಾರು?” ಎಂದು ಕೇಳುವವರು ಅನೇಕರಿದ್ದಾರೆ. ನಿಮ್ಮ ಮುಖಪ್ರಕಾಶವು ನಮ್ಮ ಮೇಲೆ ಬೆಳಗಲಿ.</verse>
				<verse number="7">ಧಾನ್ಯವೂ ಹೊಸ ದ್ರಾಕ್ಷಾರಸವೂ ಸುಗ್ಗಿಕಾಲದಲ್ಲಿ ಸಮೃದ್ಧಿಯಾದಾಗ ಇರುವುದಕ್ಕಿಂತಲೂ ಅಧಿಕವಾದ ಆನಂದವನ್ನು ನೀವು ನನ್ನ ಹೃದಯದಲ್ಲಿ ಇಟ್ಟಿದ್ದೀರಿ.</verse>
				<verse number="8">ಸಮಾಧಾನವಾಗಿ ಮಲಗಿ ನಿದ್ರೆ ಮಾಡುವೆನು, ಏಕೆಂದರೆ ಯೆಹೋವ ದೇವರೇ, ನೀವೊಬ್ಬರೇ ನನ್ನನ್ನು ಸುರಕ್ಷಿತವಾಗಿ ವಾಸಿಸುವಂತೆ ಮಾಡುತ್ತೀರಿ.</verse>
			</chapter>
			<chapter number="5">
				<verse number="1">ಯೆಹೋವ ದೇವರೇ, ನನ್ನ ಮಾತುಗಳಿಗೆ ಕಿವಿಗೊಡಿರಿ, ನನ್ನ ಪ್ರಲಾಪವನ್ನು ಲಕ್ಷ್ಯಕ್ಕೆ ತಂದುಕೊಳ್ಳಿರಿ.</verse>
				<verse number="2">ನನ್ನ ಅರಸರೇ, ನನ್ನ ದೇವರೇ, ಸಹಾಯಕ್ಕಾಗಿರುವ ನನ್ನ ಮೊರೆಯನ್ನು ಕೇಳಿರಿ, ನಿಮಗೇ ನಾನು ಪ್ರಾರ್ಥಿಸುತ್ತೇನೆ.</verse>
				<verse number="3">ಯೆಹೋವ ದೇವರೇ, ಉದಯಕಾಲದಲ್ಲಿ ನನ್ನ ಸ್ವರವನ್ನು ಕೇಳಿರಿ; ಮುಂಜಾನೆಯಲ್ಲಿ ನಾನು ನನ್ನ ಬೇಡಿಕೆಗಳನ್ನು ನಿಮ್ಮ ಮುಂದೆ ಸಮರ್ಪಿಸಿ, ಎದುರುನೋಡುತ್ತಾ ಕಾದುಕೊಂಡಿರುವೆನು.</verse>
				<verse number="4">ನೀವು ದುಷ್ಟತನವನ್ನು ಮೆಚ್ಚುವ ದೇವರಲ್ಲ; ಕೆಡುಕರು ನಿಮ್ಮ ಬಳಿಯಲ್ಲಿ ವಾಸಿಸುವುದಿಲ್ಲ.</verse>
				<verse number="5">ನಿಮ್ಮ ಸನ್ನಿಧಿಯಲ್ಲಿ ಗರ್ವಿಗಳು ನಿಂತುಕೊಳ್ಳಲಾರರು. ಅಧರ್ಮ ಮಾಡುವವರೆಲ್ಲರನ್ನು ನೀವು ದ್ವೇಷಿಸುತ್ತೀರಿ.</verse>
				<verse number="6">ಸುಳ್ಳಾಡುವವರನ್ನು ನೀವು ದಂಡಿಸುತ್ತೀರಿ. ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವ ದೇವರು ಅಸಹ್ಯಪಡುತ್ತಾರೆ.</verse>
				<verse number="7">ನಾನಾದರೋ, ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನಿಮ್ಮ ಮನೆಗೆ ಬರುವೆನು; ಭಕ್ತಿಭಾವದಿಂದ ನಿಮ್ಮ ಪರಿಶುದ್ಧ ಆಲಯದ ಕಡೆಗೆ ತಲೆಬಾಗುವೆನು.</verse>
				<verse number="8">ಯೆಹೋವ ದೇವರೇ, ನನ್ನ ವಿರೋಧಿಗಳ ನಿಮಿತ್ತ ನಿಮ್ಮ ನೀತಿಯಲ್ಲಿ ನನ್ನನ್ನು ನಡೆಸಿರಿ; ನಿಮ್ಮ ಮಾರ್ಗವನ್ನು ನನ್ನ ಮುಂದೆ ನೇರವಾಗಿ ಮಾಡಿರಿ.</verse>
				<verse number="9">ಅವರ ಬಾಯಿಯಲ್ಲಿ ಯಥಾರ್ಥ ಮಾತು ಒಂದೂ ಇಲ್ಲ; ಅವರ ಹೃದಯವು ನಾಶನದಿಂದ ತುಂಬಿದೆ. ಅವರ ಗಂಟಲು ತೆರೆದ ಸಮಾಧಿಯೇ; ತಮ್ಮ ನಾಲಿಗೆಯಿಂದ ಮುಖಸ್ತುತಿ ಮಾಡುತ್ತಾರೆ.</verse>
				<verse number="10">ಓ ದೇವರೇ! ಅವರನ್ನು ಅಪರಾಧಿಗಳೆಂದು ನಿರ್ಣಯಿಸಿರಿ, ಅವರು ತಮ್ಮ ಸ್ವಂತ ಕುತಂತ್ರಗಳಿಂದ ಬಿದ್ದುಹೋಗಲಿ. ಅವರ ಬಹು ಪಾಪಗಳ ನಿಮಿತ್ತ ಅವರನ್ನು ಬಹಿಷ್ಕರಿಸಿರಿ, ಏಕೆಂದರೆ ಅವರು ನಿಮಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.</verse>
				<verse number="11">ಆದರೆ ನಿಮ್ಮನ್ನು ಆಶ್ರಯಿಸುವವರೆಲ್ಲರು ಆನಂದಿಸಲಿ; ಅವರು ಸದಾ ನಿಮ್ಮ ಆನಂದ ಗಾನವನ್ನು ಹಾಡಲಿ. ನಿಮ್ಮ ಹೆಸರನ್ನು ಪ್ರೀತಿಸುವವರು ನಿಮ್ಮಲ್ಲಿ ಆನಂದಿಸುವಂತೆ ಅವರನ್ನು ನಿಮ್ಮ ಸಂರಕ್ಷಣೆಯಿಂದ ಆವರಿಸಿಕೊಳ್ಳಿರಿ.</verse>
				<verse number="12">ಯೆಹೋವ ದೇವರೇ, ನೀವು ನೀತಿವಂತರನ್ನು ನಿಶ್ಚಯವಾಗಿ ಆಶೀರ್ವದಿಸಿದ್ದೀರಿ; ನೀವು ಅವರನ್ನು ನಿಮ್ಮ ಮೆಚ್ಚುಗೆಯಿಂದ ಗುರಾಣಿಯಂತೆಯೇ ಆವರಿಸಿಕೊಳ್ಳಿರಿ.</verse>
			</chapter>
			<chapter number="6">
				<verse number="1">ಯೆಹೋವ ದೇವರೇ, ನೀವು ಬೇಸರದಿಂದ ನನ್ನನ್ನು ಗದರಿಸಬೇಡಿರಿ, ರೋಷದಿಂದಲೂ ನನ್ನನ್ನು ದಂಡಿಸಬೇಡಿರಿ.</verse>
				<verse number="2">ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಬಲಹೀನನಾಗಿದ್ದೇನೆ; ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿರಿ, ನನ್ನ ಎಲುಬುಗಳು ಬಹು ವ್ಯಥೆಗೊಳಗಾಗಿವೆ.</verse>
				<verse number="3">ನನ್ನ ಪ್ರಾಣವು ಬಹು ಸಂಕಟದಲ್ಲಿದೆ. ಎಲ್ಲಿಯತನಕ, ಯೆಹೋವ ದೇವರೇ, ಇನ್ನೂ ಎಲ್ಲಿಯತನಕ?</verse>
				<verse number="4">ಯೆಹೋವ ದೇವರೇ, ನನ್ನ ಕಡೆಗೆ ಹಿಂದಿರುಗಿರಿ, ನನ್ನನ್ನು ಬಿಡುಗಡೆ ಮಾಡಿರಿ; ನಿಮ್ಮ ಒಡಂಬಡಿಕೆಯ ಪ್ರೀತಿಯ ನಿಮಿತ್ತ ನನ್ನನ್ನು ರಕ್ಷಿಸಿರಿ.</verse>
				<verse number="5">ಸತ್ತವರಲ್ಲಿ ನಿಮ್ಮನ್ನು ಸ್ಮರಿಸುವವರಿಲ್ಲ. ಪಾತಾಳದಲ್ಲಿ ನಿಮ್ಮನ್ನು ಸ್ತುತಿಸುವವರು ಯಾರು?</verse>
				<verse number="6">ನನ್ನ ನರಳಾಟದಿಂದ ದಣಿದು ಹೋಗಿದ್ದೇನೆ. ರಾತ್ರಿಯೆಲ್ಲಾ ನಾನು ಅಳುವುದರಿಂದ ನನ್ನ ಹಾಸಿಗೆಯು ಕಣ್ಣೀರಿನ ಪ್ರವಾಹದಿಂದ ತೇಲಾಡುತ್ತದೆ, ಕಣ್ಣೀರಿನಿಂದ ನನ್ನ ಮಂಚವನ್ನು ತೊಯಿಸಿದ್ದೇನೆ.</verse>
				<verse number="7">ದುಃಖದಿಂದ ನನ್ನ ಕಣ್ಣುಗಳು ಬಲಹೀನವಾಗಿವೆ, ನನ್ನ ಸಕಲ ವೈರಿಗಳಿಂದ ಅವು ಮೊಬ್ಬಾಗಿವೆ.</verse>
				<verse number="8">ಕೆಟ್ಟದ್ದನ್ನು ಮಾಡುವವರೇ, ನೀವೆಲ್ಲರು ನನ್ನಿಂದ ತೊಲಗಿಹೋಗಿರಿ, ಏಕೆಂದರೆ ಯೆಹೋವ ದೇವರು ನನ್ನ ಗೋಳಾಟವನ್ನು ಕೇಳಿದ್ದಾರೆ.</verse>
				<verse number="9">ಯೆಹೋವ ದೇವರು ನಾನು ಕರುಣೆಗಾಗಿ ಕೇಳಿದ ನನ್ನ ಮೊರೆಯನ್ನು ಆಲಿಸಿದ್ದಾರೆ; ಯೆಹೋವ ದೇವರು ನನ್ನ ಪ್ರಾರ್ಥನೆಯನ್ನು ಸ್ವೀಕರಿಸುವರು.</verse>
				<verse number="10">ನನ್ನ ಶತ್ರುಗಳೆಲ್ಲರೂ ನಾಚಿಕೆಪಟ್ಟು ತತ್ತರಿಸುವರು; ಕ್ಷಣಮಾತ್ರದಲ್ಲಿ ಅವರು ಅವಮಾನಗೊಂಡು ಹಿಂದಿರುಗಿ ಹೋಗುವರು.</verse>
			</chapter>
			<chapter number="7">
				<verse number="1">ನನ್ನ ಯೆಹೋವ ದೇವರೇ, ನಿಮ್ಮನ್ನೇ ಆಶ್ರಯಿಸಿದ್ದೇನೆ; ನನ್ನನ್ನು ಬೆನ್ನಟ್ಟಿದ ಎಲ್ಲರಿಂದಲೂ ನನ್ನನ್ನು ರಕ್ಷಿಸಿ ಕಾಪಾಡಿರಿ,</verse>
				<verse number="2">ಇಲ್ಲದಿದ್ದರೆ, ನನ್ನನ್ನು ಸಿಂಹದಂತೆ ಅವರು ಹರಿದುಬಿಡುವರು ರಕ್ಷಿಸಲು ಯಾರೂ ಇಲ್ಲವೆಂದು ನನ್ನನ್ನು ನಾಶಮಾಡಿಬಿಡುವರು.</verse>
				<verse number="3">ನನ್ನ ಯೆಹೋವ ದೇವರೇ, ನಾನು ಅನ್ಯಾಯ ಮಾಡಿದ್ದರೆ, ನನ್ನ ಕೈಗಳಲ್ಲಿ ಅಪರಾಧವಿದ್ದರೆ,</verse>
				<verse number="4">ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡುಮಾಡಿದ್ದರೆ, ಕಾರಣವಿಲ್ಲದೆ ನನ್ನ ವೈರಿಯಿಂದ ಏನನ್ನಾದರೂ ಸುಲಿದುಕೊಂಡಿದ್ದರೆ,</verse>
				<verse number="5">ಆಗ ನನ್ನ ವೈರಿಯು ಬೆನ್ನಟ್ಟಿ ನನ್ನನ್ನು ಹಿಡಿದುಕೊಳ್ಳಲಿ. ನನ್ನ ಜೀವವನ್ನು ನೆಲಕ್ಕೆ ಹಾಕಿ ತುಳಿದು ಬಿಡಲಿ ಮತ್ತು ನನ್ನ ಮಾನವನ್ನು ಮಣ್ಣು ಪಾಲಾಗುವಂತೆ ಮಾಡಲಿ.</verse>
				<verse number="6">ಯೆಹೋವ ದೇವರೇ, ನೀವು ಕೋಪದಿಂದ ಎದ್ದೇಳಿರಿ; ನನ್ನ ವೈರಿಗಳ ಕ್ರೋಧಕ್ಕೆ ವಿರೋಧವಾಗಿ ಎಚ್ಚರಗೊಳ್ಳಿರಿ. ನನ್ನ ದೇವರೇ, ನ್ಯಾಯಕ್ಕೆ ನಿಮ್ಮ ತೀರ್ಪನ್ನು ನೀಡಲು ಎದ್ದೇಳಿರಿ.</verse>
				<verse number="7">ರಾಷ್ಟ್ರಗಳು ನಿಮ್ಮ ಸುತ್ತಲು ಬಂದು ಸೇರಲಿ, ಉನ್ನತದಿಂದ ನೀವು ಅವರ ಮೇಲೆ ಸಿಂಹಾಸನದಲ್ಲಿದ್ದು ಆಳಿರಿ.</verse>
				<verse number="8">ಯೆಹೋವ ದೇವರು ಜನಗಳಿಗೆ ನ್ಯಾಯತೀರಿಸಲಿ. ಮಹೋನ್ನತರಾದ ಯೆಹೋವ ದೇವರೇ, ನನ್ನ ನೀತಿಯ ಪ್ರಕಾರವೂ, ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸಿರಿ.</verse>
				<verse number="9">ದುಷ್ಟರ ಕೆಟ್ಟತನವು ಅಂತ್ಯವಾಗುವಂತೆಯೂ ನೀತಿವಂತರ ಭದ್ರತೆಯು ನಿಶ್ಚಯವಾಗುವಂತೆಯೂ ಮಾಡಿರಿ. ನೀತಿಯುಳ್ಳ ದೇವರೇ, ನೀವು ಹೃದಯವನ್ನೂ ಮನಸ್ಸನ್ನೂ ಪರಿಶೋಧಿಸುವವರಾಗಿದ್ದೀರಿ.</verse>
				<verse number="10">ಮಹೋನ್ನತರಾದ ದೇವರು ನನ್ನ ಗುರಾಣಿಯಾಗಿದ್ದಾರೆ, ಅವರು ಯಥಾರ್ಥ ಹೃದಯವುಳ್ಳವರನ್ನು ರಕ್ಷಿಸುತ್ತಾರೆ.</verse>
				<verse number="11">ದೇವರು ನೀತಿಯುಳ್ಳ ನ್ಯಾಯಾಧಿಪತಿಯಾಗಿದ್ದಾರೆ. ದೇವರು ದುಷ್ಟನ ಮೇಲೆ ಸದಾ ರೋಷವುಳ್ಳವರಾಗಿದ್ದಾರೆ.</verse>
				<verse number="12">ಅಂಥವರು ತಿರುಗಿಕೊಳ್ಳದಿದ್ದರೆ ದೇವರು ತಮ್ಮ ಖಡ್ಗ ಮಸೆಯುವರು; ತಮ್ಮ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡುವರು.</verse>
				<verse number="13">ಅಂಥವರಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿದ್ದಾರೆ; ತಮ್ಮ ಅಗ್ನಿಬಾಣಗಳನ್ನು ಸಿದ್ಧಮಾಡುತ್ತಾರೆ.</verse>
				<verse number="14">ಅಂಥವರು ದುಷ್ಟತನವನ್ನು ಗರ್ಭಧರಿಸಿ, ಸೇಡನ್ನು ಗರ್ಭದಲ್ಲಿಟ್ಟುಕೊಂಡು ಸುಳ್ಳನ್ನು ಹೆರುವರು.</verse>
				<verse number="15">ಅಂಥವರು ಕುಣಿಯನ್ನು ಅಗೆದಿದ್ದಾರೆ. ಆದರೆ ತಾವು ಅಗೆದ ಕುಣಿಯೊಳಗೆ ತಾವೇ ಬೀಳುವರು.</verse>
				<verse number="16">ಅಂಥವರ ಕೇಡು ಅವರ ಮೇಲೆಯೇ ತಿರುಗುವುದು; ಅವರ ತಲೆಯ ಮೇಲೆ ಅವರ ಬಲಾತ್ಕಾರವೇ ಇಳಿಯುವುದು.</verse>
				<verse number="17">ನಾನು ಯೆಹೋವ ದೇವರನ್ನು ಕೊಂಡಾಡುವೆನು; ಏಕೆಂದರೆ, ಅವರು ನೀತಿಯುಳ್ಳವರು. ಮಹೋನ್ನತರಾದ ಯೆಹೋವ ದೇವರ ಹೆಸರನ್ನು ಕೀರ್ತನೆ ಮಾಡುವೆನು.</verse>
			</chapter>
			<chapter number="8">
				<verse number="1">ನಮ್ಮ ಕರ್ತ ಆಗಿರುವ ಯೆಹೋವ ದೇವರೇ, ನಿಮ್ಮ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ವೈಭವವುಳ್ಳದ್ದಾಗಿದೆ! ನೀವು ನಿಮ್ಮ ಮಹಿಮೆಯನ್ನು ಆಕಾಶಗಳಲ್ಲಿ ಸ್ಥಾಪಿಸಿದ್ದೀರಿ.</verse>
				<verse number="2">ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಸ್ತೋತ್ರದ ಮೂಲಕ ನಿಮ್ಮ ಶತ್ರುಗಳ ವಿರೋಧವಾಗಿ ಭದ್ರಕೋಟೆಯನ್ನು ಸ್ಥಾಪಿಸಿ, ನಿಮ್ಮ ವೈರಿಗಳನ್ನೂ ಮುಯ್ಯಿ ತೀರಿಸುವವರನ್ನೂ ನೀವು ಸುಮ್ಮಗಿರಿಸಿದ್ದೀರಿ.</verse>
				<verse number="3">ನಿಮ್ಮ ಬೆರಳಿನ ಸೃಷ್ಟಿಯಾದ ಆಕಾಶಮಂಡಲವನ್ನೂ ನೀವು ಉಂಟುಮಾಡಿದ ಚಂದ್ರನಕ್ಷತ್ರಗಳನ್ನೂ ನಾನು ನೋಡಿದಾಗ,</verse>
				<verse number="4">ನೀವು ಮಾನವರನ್ನು ನೆನಸಲು ಅವರು ಎಷ್ಟರವರು? ಮನುಷ್ಯಪುತ್ರನನ್ನು ಲಕ್ಷ್ಯವಿಡಲು ಅವನು ಯಾರು?</verse>
				<verse number="5">ನೀವು ಮನುಷ್ಯಪುತ್ರನನ್ನು ದೇವರಿಗಿಂತಲೂ ಸ್ವಲ್ಪ ಕಡಿಮೆ ಮಾಡಿ, ಮಹಿಮೆಯನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿಟ್ಟಿದ್ದೀರಿ.</verse>
				<verse number="6">ನೀವು ನಿಮ್ಮ ಕೈಕೃತಿಗಳ ಮೇಲೆ ಅವನನ್ನು ಅಧಿಕಾರಿಯನ್ನಾಗಿ ಮಾಡಿ, ಸಮಸ್ತವನ್ನೂ ಅವನ ಪಾದಗಳ ಕೆಳಗೆ ಹಾಕಿದ್ದೀರಿ:</verse>
				<verse number="7">ಎಲ್ಲಾ ಕುರಿದನಗಳನ್ನೂ ಅಡವಿಯ ಮೃಗಗಳನ್ನೂ</verse>
				<verse number="8">ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ಸಮುದ್ರದ ಹಾದಿಗಳಲ್ಲಿ ಸಂಚರಿಸುವ ಎಲ್ಲ ವಿಧವಾದ ಜೀವಜಂತುಗಳನ್ನೂ ಅವನ ಪಾದಗಳ ಕೆಳಗೆ ಹಾಕಿದ್ದೀರಿ.</verse>
				<verse number="9">ನಮ್ಮ ಕರ್ತ ಆಗಿರುವ ಯೆಹೋವ ದೇವರೇ, ನಿಮ್ಮ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದಾಗಿದೆ!</verse>
			</chapter>
			<chapter number="9">
				<verse number="1">ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಾನು ನಿಮ್ಮನ್ನು ಸ್ತುತಿಸುವೆನು; ನಿಮ್ಮ ಅದ್ಭುತ ಕಾರ್ಯಗಳನ್ನೆಲ್ಲಾ ನಾನು ವರ್ಣಿಸುವೆನು.</verse>
				<verse number="2">ನಾನು ನಿಮ್ಮಲ್ಲಿ ಆನಂದಿಸಿ ಉಲ್ಲಾಸಪಡುವೆನು; ಮಹೋನ್ನತರೇ, ನಾನು ನಿಮ್ಮ ಹೆಸರನ್ನು ಕೊಂಡಾಡಿ ಹಾಡುವೆನು.</verse>
				<verse number="3">ನನ್ನ ಶತ್ರುಗಳು ಹಿಂದಿರುಗಿ ಓಡುವರು; ಅವರು ನಿಮ್ಮ ಮುಂದೆ ಎಡವಿಬಿದ್ದು ನಾಶವಾಗುವರು.</verse>
				<verse number="4">ನೀವು ನನ್ನ ನ್ಯಾಯವನ್ನೂ ವ್ಯಾಜ್ಯವನ್ನೂ ತೀರಿಸಲು ನೀತಿಯುಳ್ಳ ನ್ಯಾಯಾಧಿಪತಿಯಾಗಿ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೀರಿ.</verse>
				<verse number="5">ರಾಷ್ಟ್ರಗಳನ್ನು ಖಂಡಿಸಿ ದುಷ್ಟರನ್ನು ದಂಡಿಸಿದ್ದೀರಿ; ಅವರ ಹೆಸರನ್ನು ಯುಗಯುಗಾಂತರಗಳವರೆಗೂ ಅಳಿಸಿಬಿಟ್ಟಿದ್ದೀರಿ.</verse>
				<verse number="6">ವೈರಿಯನ್ನು ವಿನಾಶವು ನಿರಂತರವಾಗಿ ಬೆನ್ನಟ್ಟಿದೆ, ನೀವು ಅವರ ಪಟ್ಟಣಗಳನ್ನು ಕೆಡವಿದ್ದೀರಿ; ಅವರ ಸ್ಮರಣೆಯು ಅವರೊಂದಿಗೇ ನಾಶವಾಯಿತು.</verse>
				<verse number="7">ಯೆಹೋವ ದೇವರು ಸದಾ ಆಳುವವರು; ಅವರು ನ್ಯಾಯಕ್ಕಾಗಿ ತಮ್ಮ ಸಿಂಹಾಸನವನ್ನು ಸ್ಥಾಪಿಸಿದ್ದಾರೆ.</verse>
				<verse number="8">ಅವರು ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವರು; ಪ್ರಜೆಗಳಿಗೆ ಯಥಾರ್ಥವಾದ ತೀರ್ಪು ನೀಡುವರು.</verse>
				<verse number="9">ಯೆಹೋವ ದೇವರು ಕುಗ್ಗಿದವರಿಗೆ ಆಶ್ರಯವಾಗಿರುವರು, ಇಕ್ಕಟ್ಟಿನ ದಿವಸಗಳಲ್ಲಿ ಭದ್ರಕೋಟೆಯಾಗಿರುವರು.</verse>
				<verse number="10">ನಿಮ್ಮ ಹೆಸರನ್ನು ತಿಳಿದವರು ನಿಮ್ಮಲ್ಲಿ ಭರವಸೆ ಇಡುವರು, ಏಕೆಂದರೆ ಯೆಹೋವ ದೇವರೇ, ನಿಮ್ಮನ್ನು ಹುಡುಕುವವರನ್ನು ನೀವು ಎಂದಿಗೂ ತೊರೆದುಬಿಡುವುದಿಲ್ಲ.</verse>
				<verse number="11">ಚೀಯೋನಿನಲ್ಲಿ ವಾಸಿಸುವ ಯೆಹೋವ ದೇವರಿಗೆ ಸ್ತುತಿಹಾಡಿರಿ; ಅವರ ಕ್ರಿಯೆಗಳನ್ನು ರಾಷ್ಟ್ರಗಳಲ್ಲಿ ಸಾರಿ ಹೇಳಿರಿ.</verse>
				<verse number="12">ಅವರು ಪ್ರಾಣಹತ್ಯೆ ಮಾಡುವವರನ್ನು ಮುಯ್ಯಿತೀರಿಸಲು ಜ್ಞಾಪಕಮಾಡಿಕೊಳ್ಳುವರು; ಬಾಧೆಗೆ ಒಳಗಾಗಿರುವ ದೀನರ ಕೂಗನ್ನು ಅವರು ಅಲಕ್ಷ್ಯಮಾಡುವುದಿಲ್ಲ.</verse>
				<verse number="13">ಯೆಹೋವ ದೇವರೇ, ನನ್ನ ವೈರಿಗಳು ನನ್ನನ್ನು ಹಿಂಸಿಸುವುದನ್ನು ನೋಡಿರಿ. ನನ್ನನ್ನು ಕರುಣಿಸಿ, ಮರಣ ದ್ವಾರದಿಂದ ನನ್ನನ್ನು ಮೇಲಕ್ಕೆತ್ತಿರಿ.</verse>
				<verse number="14">ಆಗ ಚೀಯೋನೆಂಬ ನಗರ ದ್ವಾರಗಳಲ್ಲಿ ನಿಮ್ಮ ಸ್ತುತಿಯನ್ನು ಸಾರುವೆನು. ನಿಮ್ಮ ರಕ್ಷಣೆಯಲ್ಲಿ ಆನಂದಿಸುವೆನು.</verse>
				<verse number="15">ರಾಷ್ಟ್ರಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲೇ ಅವರ ಕಾಲುಗಳು ಸಿಕ್ಕಿಕೊಂಡಿವೆ.</verse>
				<verse number="16">ಯೆಹೋವ ದೇವರು ತಮ್ಮ ನ್ಯಾಯಕೃತ್ಯಗಳಲ್ಲಿ ಪ್ರಸಿದ್ಧರಾಗಿದ್ದಾರೆ; ದುಷ್ಟರು ತಮ್ಮ ಕೈಕೆಲಸದಲ್ಲಿ ಸಿಕ್ಕಿಕೊಂಡಿದ್ದಾರೆ.</verse>
				<verse number="17">ದುಷ್ಟರು ಪಾತಾಳಕ್ಕೆ ತಿರುಗುವರು, ದೇವರನ್ನು ಮರೆಯುವ ರಾಷ್ಟ್ರಗಳ ಅಂತ್ಯವೂ ಹಾಗೇ ಇರುವುದು.</verse>
				<verse number="18">ಆದರೆ ದೇವರು ಬಡವರನ್ನು ಎಂದೆಂದಿಗೂ ಮರೆಯುವುದಿಲ್ಲ; ಕುಗ್ಗಿದವರ ನಿರೀಕ್ಷೆ ಎಂದೆಂದಿಗೂ ನಾಶವಾಗುವುದಿಲ್ಲ.</verse>
				<verse number="19">ಯೆಹೋವ ದೇವರೇ ಎದ್ದೇಳಿರಿ, ಮನುಷ್ಯರು ನನ್ನ ಮೇಲೆ ವಿಜಯ ಸಾಧಿಸದಿರಲಿ; ರಾಷ್ಟ್ರಗಳಿಗೆ ನಿಮ್ಮ ಮುಂದೆಯೇ ನ್ಯಾಯತೀರ್ಪಾಗಲಿ.</verse>
				<verse number="20">ಯೆಹೋವ ದೇವರೇ, ಅವರನ್ನು ಭಯದಲ್ಲಿರಿಸಿರಿ; ರಾಷ್ಟ್ರಗಳು ತಾವು ಮನುಷ್ಯರೇ ಎಂದು ತಿಳಿದುಕೊಳ್ಳಲಿ.</verse>
			</chapter>
			<chapter number="10">
				<verse number="1">ಯೆಹೋವ ದೇವರೇ, ನೀವು ದೂರದಲ್ಲಿ ನಿಂತುಕೊಳ್ಳುವುದು ಏಕೆ? ಇಕ್ಕಟ್ಟಿನ ಕಾಲಗಳಲ್ಲಿ ನೀವು ಮರೆಯಾಗಿರುವುದೂ ಏಕೆ?</verse>
				<verse number="2">ದುಷ್ಟನು ಗರ್ವದಿಂದ ದೀನನನ್ನು ಬೇಟೆಯಾಡುತ್ತಾನೆ, ಅವನು ಕಲ್ಪಿಸಿದ ಕುಯುಕ್ತಿಗಳಲ್ಲಿ ಅವನೇ ಸಿಕ್ಕಿಬೀಳುತ್ತಾನೆ.</verse>
				<verse number="3">ದುಷ್ಟನು ತನ್ನ ಹೃದಯಭಿಲಾಷೆಯಲ್ಲಿ ಕೊಚ್ಚಿಕೊಳ್ಳುತ್ತಾನೆ; ಅವನು ದುರಾಶೆಯುಳ್ಳವರನ್ನು ಆಶೀರ್ವದಿಸುವವನೂ ಯೆಹೋವ ದೇವರನ್ನು ಶಪಿಸುವವನೂ ಆಗಿದ್ದಾನೆ.</verse>
				<verse number="4">ದುಷ್ಟನು ತನ್ನ ಗರ್ವದಲ್ಲಿ ದೇವರನ್ನು ಹುಡುಕುವುದಿಲ್ಲ; ಅವನ ಎಲ್ಲ ಯೋಚನೆಗಳಲ್ಲಿಯೂ ದೇವರಿಗೆ ಸ್ಥಳವೇ ಇಲ್ಲ.</verse>
				<verse number="5">ಅವನ ಮಾರ್ಗಗಳು ಯಾವಾಗಲೂ ಸಮೃದ್ಧಿಯಾಗಿರುತ್ತವೆ; ಆದರೆ ನಿಮ್ಮ ನಿಯಮಗಳು ಅವನ ದೃಷ್ಟಿಗೆ ಬಹು ದೂರವಾಗಿವೆ; ಅವನು ತನ್ನ ಎಲ್ಲಾ ವೈರಿಗಳನ್ನು ಹೀಯಾಳಿಸುತ್ತಾನೆ.</verse>
				<verse number="6">ಅವನು ತನ್ನ ಹೃದಯದಲ್ಲಿ ಹೀಗೆ ಹೇಳುವನು, “ಯಾವುದೂ ಎಂದೂ ನನ್ನನ್ನು ಕದಲಿಸುವುದಿಲ್ಲ.” ಅವನು ಹೀಗೆ ಶಪಥ ಮಾಡುವನು, “ಯಾರೂ ಎಂದಿಗೂ ನನಗೆ ಕೇಡುಮಾಡಲಾರರು.”</verse>
				<verse number="7">ಅವನ ಬಾಯಿ ಸುಳ್ಳಿನಿಂದಲೂ ಬೆದರಿಕೆಯಿಂದಲೂ ತುಂಬಿದೆ. ಕೇಡೂ ನಾಶನವೂ ಅವನ ನಾಲಿಗೆಯ ಕೆಳಗೆ ಇರುತ್ತವೆ.</verse>
				<verse number="8">ಅವನು ಗ್ರಾಮಗಳಲ್ಲಿ ಹೊಂಚಿಕೊಂಡು ಮರೆಯಾದ ಸ್ಥಳಗಳಲ್ಲಿ, ನಿರಪರಾಧಿಯನ್ನು ಕೊಲ್ಲುತ್ತಾನೆ. ಅವನ ಕಣ್ಣುಗಳು ನಿರ್ಗತಿಕರನ್ನು ಹೊಂಚಿ ನೋಡುತ್ತವೆ;</verse>
				<verse number="9">ಸಿಂಹದ ಹಾಗೆ, ಮರೆಯಲ್ಲಿ ಹೊಂಚುಹಾಕುತ್ತಾನೆ; ಅಸಹಾಯಕರನ್ನು ಹಿಡಿಯಲು ಕಾಯುತ್ತಾನೆ ಕುಗ್ಗಿದವನನ್ನು ಹಿಡಿದೆಳೆದು ತನ್ನ ಬಲೆಯಲ್ಲಿ ಹಾಕುತ್ತಾನೆ.</verse>
				<verse number="10">ಅವನ ಕೈಯಲ್ಲಿ ಸಿಕ್ಕುವವರು ಜಜ್ಜಿಹೋಗುತ್ತಾರೆ, ಅವನ ಬಲದ ಎದುರು ಸೋತುಹೋಗುತ್ತಾರೆ.</verse>
				<verse number="11">“ದೇವರು ಮರೆತುಬಿಟ್ಟಿದ್ದಾರೆ; ತಮ್ಮ ಮುಖ ಮರೆ ಮಾಡಿಕೊಂಡಿದ್ದಾರೆ; ಇನ್ನೆಂದೂ ಕಾಣಲಾರರು,” ಎಂದು ತನಗೆ ತಾನೇ ಹೇಳಿಕೊಳ್ಳುತ್ತಾನೆ.</verse>
				<verse number="12">ಯೆಹೋವ ದೇವರೇ, ಎದ್ದೇಳಿರಿ! ದೇವರೇ, ನಿಮ್ಮ ಕೈ ಎತ್ತಿರಿ. ನಿಸ್ಸಹಾಯಕರನ್ನು ಮರೆಯಬೇಡಿರಿ.</verse>
				<verse number="13">ದುಷ್ಟರು ದೇವರನ್ನು ಅಲಕ್ಷ್ಯ ಮಾಡುವುದು ಏಕೆ? “ದೇವರು ನನ್ನನ್ನು ಲೆಕ್ಕ ಕೇಳುವುದಿಲ್ಲ,” ಎಂದು ಅವನು ತನಗೆ ತಾನೇ ಹೇಳಿಕೊಳ್ಳುವುದು ಏಕೆ?</verse>
				<verse number="14">ದೇವರೇ, ನೀವಾದರೋ ಬಾಧೆಪಡುವವರ ಕಷ್ಟಗಳನ್ನು ನೋಡಿದ್ದೀರಿ; ಅವರ ಸಂಕಟವನ್ನು ಪರಿಗಣಿಸಿ, ನೀವೇ ನೋಡಿಕೊಳ್ಳಿರಿ. ಗತಿಯಿಲ್ಲದವರು ತಮ್ಮನ್ನು ನಿಮಗೇ ಒಪ್ಪಿಸಿಕೊಡುತ್ತಾರೆ; ನೀವೇ ದಿಕ್ಕಿಲ್ಲದವರಿಗೆ ಸಹಾಯ ಮಾಡುವವರು.</verse>
				<verse number="15">ದುಷ್ಟನ ಭುಜಬಲವನ್ನು ಮುರಿದುಬಿಡಿರಿ; ಕೆಟ್ಟದ್ದನ್ನು ಮಾಡುವವರಿಗೆ ಅವರ ಕೆಟ್ಟತನಕ್ಕೆ ಲೆಕ್ಕ ಕೇಳಿರಿ; ಇಲ್ಲದಿದ್ದರೆ ನೀವು ಅವನನ್ನು ಲೆಕ್ಕ ಕೇಳುವುದಿಲ್ಲ ಅಂದುಕೊಳ್ಳುವನು.</verse>
				<verse number="16">ಯೆಹೋವ ದೇವರು ಯುಗಯುಗಾಂತರಗಳಿಗೂ ಅರಸರಾಗಿದ್ದಾರೆ; ರಾಷ್ಟ್ರಗಳು ಅವರ ದೇಶದೊಳಗಿಂದ ಹೊರಹಾಕಲಾಯಿತು.</verse>
				<verse number="17">ಯೆಹೋವ ದೇವರೇ, ನೀವು ಬಾಧೆಪಡುವವರ ಬಯಕೆಯನ್ನು ಆಲಿಸುತ್ತೀರಿ; ಅವರನ್ನು ಪ್ರೋತ್ಸಾಹಿಸಿ, ಅವರ ಕೂಗನ್ನು ಲಾಲಿಸುತ್ತೀರಿ.</verse>
				<verse number="18">ಅನಾಥರಿಗೂ, ಕುಗ್ಗಿದವರಿಗೂ ನ್ಯಾಯವನ್ನು ನಡಿಸಿಕೊಡಿರಿ. ಹೀಗಾದರೆ ಕೇವಲ ಮಣ್ಣಿನ ಮಾನವರಿಂದ ಅವರಿಗೆ ಇನ್ನೆಂದಿಗೂ ಭಯ ಉಂಟಾಗುವುದಿಲ್ಲ.</verse>
			</chapter>
			<chapter number="11">
				<verse number="1">ಯೆಹೋವ ದೇವರಲ್ಲಿ ನಾನು ಆಶ್ರಯಿಸಿದ್ದೇನೆ. ಹಾಗಾದರೆ, “ಒಂದು ಪಕ್ಷಿಯಂತೆ ನಿನ್ನ ಪರ್ವತಕ್ಕೆ ಹಾರಿ ಹೋಗು,” ಎಂದು ನೀವು ನನಗೆ ಹೇಗೆ ಹೇಳುವಿರಿ?</verse>
				<verse number="2">“ಇಗೋ, ದುಷ್ಟರು ತಮ್ಮ ಬಿಲ್ಲು ಬಗ್ಗಿಸಿ; ಬಾಣವನ್ನು ಬಿಲ್ಲಿಗೆ ಹೂಡಿ, ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವುದಕ್ಕೆ ಸಿದ್ಧಮಾಡಿದ್ದಾರೆ.</verse>
				<verse number="3">ಅಸ್ತಿವಾರಗಳೇ ಕೆಡವುತ್ತಿರಲು, ನೀತಿವಂತನು ಏನು ಮಾಡಲು ಸಾಧ್ಯ?”</verse>
				<verse number="4">ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ; ಯೆಹೋವ ದೇವರು ತಮ್ಮ ಪರಲೋಕ ಸಿಂಹಾಸನದಲ್ಲಿ ಇದ್ದಾರೆ. ಅವರು ಭೂಮಿಯಲ್ಲಿ ಪ್ರತಿಯೊಬ್ಬರನ್ನು ಗಮನಿಸುತ್ತಾರೆ; ಅವರ ಕಣ್ಣುಗಳು ಮಾನವರೆಲ್ಲರನ್ನು ಪರಿಶೋಧಿಸುತ್ತವೆ.</verse>
				<verse number="5">ಯೆಹೋವ ದೇವರು ನೀತಿವಂತನನ್ನು ಪರೀಕ್ಷಿಸುತ್ತಾರೆ, ಆದರೆ ಅವರು ದುಷ್ಟರನ್ನೂ ಹಿಂಸಾತ್ಮಕರನ್ನೂ ವಿರೋಧಿಸುತ್ತಾರೆ.</verse>
				<verse number="6">ಅವರು ದುಷ್ಟರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ಉರಿಗಾಳಿಯನ್ನೂ ಸುರಿಸಲಿ; ಇವೇ ದುಷ್ಟರ ಪಾಲಾಗಿರಲಿ.</verse>
				<verse number="7">ಏಕೆಂದರೆ ಯೆಹೋವ ದೇವರು ನೀತಿಯುಳ್ಳವರು. ಅವರು ನ್ಯಾಯವನ್ನು ಪ್ರೀತಿಸುತ್ತಾರೆ; ಯಥಾರ್ಥರು ಅವರ ಮುಖವನ್ನು ದೃಷ್ಟಿಸುವರು.</verse>
			</chapter>
			<chapter number="12">
				<verse number="1">ಯೆಹೋವ ದೇವರೇ, ರಕ್ಷಿಸಿರಿ, ಏಕೆಂದರೆ ದೇವಭಕ್ತರು ಮುಗಿದು ಹೋಗುತ್ತಿದ್ದಾರೆ; ಜನರಲ್ಲಿ ನಂಬಿಗಸ್ತರು ಇಲ್ಲದೆ ಹೋಗುತ್ತಿದ್ದಾರೆ.</verse>
				<verse number="2">ಪ್ರತಿಯೊಬ್ಬರು ತಮ್ಮ ನೆರೆಯವರ ಸಂಗಡ ಸುಳ್ಳಾಡುತ್ತಾರೆ; ಅವರು ತಮ್ಮ ತುಟಿಯಿಂದ ಹೊಗಳಿ, ಹೃದಯದಲ್ಲಿ ವಂಚನೆಯನ್ನು ಮಾತನಾಡುತ್ತಾರೆ.</verse>
				<verse number="3">ಹೊಗಳಿಕೆಯ ಎಲ್ಲಾ ತುಟಿಗಳನ್ನೂ ಗರ್ವ ಮಾತನಾಡುವ ಎಲ್ಲಾ ನಾಲಿಗೆಯನ್ನೂ ಯೆಹೋವ ದೇವರು ಮೌನವಾಗಿರಿಸಲಿ.</verse>
				<verse number="4">ಅವರು ಹೀಗೆನ್ನುತ್ತಾರೆ, “ನಾವು ನಮ್ಮ ನಾಲಿಗೆಯಿಂದ ಜಯಿಸುವೆವು; ನಮ್ಮ ತುಟಿಗಳೇ ನಮಗೆ ಸಂರಕ್ಷಣೆ ನಮ್ಮ ಮೇಲೆ ಒಡೆಯನು ಯಾರು?”</verse>
				<verse number="5">“ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರು ನರಳಾಡುವುದರಿಂದಲೂ ನಾನು ಈಗಲೇ ಏಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಪೀಡಿಸುವವರಿಂದ ನಾನು ಬಡವರನ್ನು ಕಾಪಾಡುವೆನು.”</verse>
				<verse number="6">ಯೆಹೋವ ದೇವರ ವಾಕ್ಯಗಳು ದೋಷವಿಲ್ಲದ್ದು. ಅವು ಮಣ್ಣಿನ ಕುಲುಮೆಯಲ್ಲಿ ಶುದ್ಧೀಕರಿಸಿದ ಬೆಳ್ಳಿಯಂತೆಯೂ ಏಳು ಸಾರಿ ಪುಟಕ್ಕೆ ಹಾಕಿದ ಬಂಗಾರದಂತೆಯೂ ಇವೆ.</verse>
				<verse number="7">ಯೆಹೋವ ದೇವರೇ, ನೀವು ಗತಿಯಿಲ್ಲದವರನ್ನು ದುಷ್ಟರಿಂದ ಯಾವಾಗಲೂ ಕಾಪಾಡಿ ಸಂರಕ್ಷಿಸುತ್ತೀರಿ,</verse>
				<verse number="8">ಮನುಷ್ಯರು ಅಸಹ್ಯವಾದದ್ದನ್ನು ಗೌರವಿಸುವಾಗ, ಆ ದುಷ್ಟರು ಎಲ್ಲಾ ಕಡೆಗಳಲ್ಲಿಯೂ ಸ್ವತಂತ್ರವಾಗಿ ಅಲೆದಾಡುತ್ತಿರುವರು.</verse>
			</chapter>
			<chapter number="13">
				<verse number="1">ಯೆಹೋವ ದೇವರೇ, ಎಷ್ಟರವರೆಗೆ ನನ್ನನ್ನು ಮರೆಯುವಿರಿ? ಎಂದೆಂದಿಗೂ ನನ್ನನ್ನು ಮರೆಯುವಿರೋ? ಎಷ್ಟರವರೆಗೆ ನಿಮ್ಮ ಮುಖವನ್ನು ನನ್ನಿಂದ ಮರೆಮಾಡುವಿರಿ?</verse>
				<verse number="2">ಇನ್ನೆಷ್ಟರವರೆಗೆ ನನ್ನ ಆಲೋಚನೆಗಳೊಂದಿಗೆ ನಾನು ಹೋರಾಡುತ್ತಿರಬೇಕು? ದಿನನಿತ್ಯವು ನಾನು ನನ್ನ ಹೃದಯದಲ್ಲಿ ನೊಂದಿರಬೇಕೆ? ಇನ್ನೆಷ್ಟರವರೆಗೆ ನನ್ನ ಶತ್ರುವು ನನ್ನ ಮೇಲೆ ಜಯ ಹೊಂದಿರಬೇಕು?</verse>
				<verse number="3">ನನ್ನ ದೇವರಾದ ಯೆಹೋವ ದೇವರೇ, ನನ್ನನ್ನು ನೋಡಿ ನನಗೆ ಸದುತ್ತರ ಕೊಡಿರಿ. ನನಗೆ ಮರಣ ನಿದ್ರೆ ಉಂಟಾಗದಂತೆ ನನ್ನ ಕಣ್ಣುಗಳನ್ನು ಬೆಳಗಿಸಿರಿ.</verse>
				<verse number="4">“ನಾನು ಅವನನ್ನು ಸೋಲಿಸಿದ್ದೇನೆ,” ಎಂದು ನನ್ನ ಶತ್ರು ಹೇಳದಿರಲಿ, ನಾನು ಬೀಳುವಾಗ ನನ್ನ ಶತ್ರುಗಳು ಆನಂದಿಸದಿರಲಿ.</verse>
				<verse number="5">ನಾನಾದರೋ ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಭರವಸೆ ಇಟ್ಟಿದ್ದೇನೆ. ನಿಮ್ಮ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾಸಪಡುವುದು.</verse>
				<verse number="6">ನಾನು ಯೆಹೋವ ದೇವರಿಗೆ ಸ್ತುತಿ ಹಾಡುವೆನು, ಏಕೆಂದರೆ ಅವರು ನನಗೆ ಒಳ್ಳೆಯವರಾಗಿದ್ದಾರೆ.</verse>
			</chapter>
			<chapter number="14">
				<verse number="1">“ದೇವರು ಇಲ್ಲಾ,” ಎಂದು ಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ಅವರು ಕೆಟ್ಟು ಹೋಗಿ, ಅಸಹ್ಯ ಕೃತ್ಯಗಳನ್ನು ಮಾಡುತ್ತಾರೆ; ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ.</verse>
				<verse number="2">ದೇವರನ್ನು ಹುಡುಕುವ ಜ್ಞಾನಿಗಳು ಇದ್ದಾರೋ ಎಂದು ನೋಡುವುದಕ್ಕೆ ಯೆಹೋವ ದೇವರು ಸ್ವರ್ಗದಿಂದ, ಮನುಷ್ಯರ ಮೇಲೆ ದೃಷ್ಟಿಸಿದರು.</verse>
				<verse number="3">ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, ಎಲ್ಲರೂ ಕೆಟ್ಟು ಹೋಗಿದ್ದಾರೆ; ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ, ಒಬ್ಬರಾದರೂ ಇಲ್ಲ.</verse>
				<verse number="4">ದುಷ್ಟತ್ವವನ್ನು ನಡೆಸುವವರಿಗೆ ಏನೂ ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ರೊಟ್ಟಿಯಂತೆ ತಿಂದು ಬಿಡುತ್ತಾರೆಯೋ? ಆದರೆ ಅವರು ಯೆಹೋವ ದೇವರಿಗೆ ಎಂದೂ ಮೊರೆಯಿಡುವುದಿಲ್ಲ.</verse>
				<verse number="5">ದೇವರು ನೀತಿವಂತರ ಸಹವಾಸದಲ್ಲಿ ಇರುವುದರಿಂದ, ದುಷ್ಟತ್ವವನ್ನು ನಡೆಸುವವರು ಅತ್ಯಂತ ಭಯಭ್ರಾಂತರಾಗುವರು.</verse>
				<verse number="6">ದುಷ್ಟತ್ವ ನಡೆಸುವವರೇ, ನೀವು ಬಡವರ ಯೋಜನೆಗಳನ್ನು ನಿರಾಶೆಗೊಳಿಸುತ್ತೀರಿ, ಆದರೆ ಯೆಹೋವ ದೇವರೇ ಅವರ ಆಶ್ರಯವಾಗಿದ್ದಾರೆ.</verse>
				<verse number="7">ಓ, ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬಂದರೆ ಎಷ್ಟೋ ಒಳ್ಳೆಯದು! ಯೆಹೋವ ದೇವರು ತಮ್ಮ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ, ಯಾಕೋಬ್ಯರು ಉಲ್ಲಾಸಗೊಳ್ಳುವರು. ಇಸ್ರಾಯೇಲರು ಸಂತೋಷಿಸುವರು.</verse>
			</chapter>
			<chapter number="15">
				<verse number="1">ಯೆಹೋವ ದೇವರೇ, ನಿಮ್ಮ ಪರಿಶುದ್ಧ ಗುಡಾರದಲ್ಲಿ ವಾಸಿಸುವವರು ಯಾರು? ನಿಮ್ಮ ಪರಿಶುದ್ಧ ಪರ್ವತದಲ್ಲಿ ಬಾಳುವವರು ಯಾರು?</verse>
				<verse number="2">ದೋಷವಿಲ್ಲದವರಾಗಿ ಜೀವಿಸಿ, ನೀತಿಯನ್ನು ನಡೆಸಿ, ತಮ್ಮ ಹೃದಯದಿಂದ ಸತ್ಯವನ್ನಾಡುವವರೇ;</verse>
				<verse number="3">ಅವರ ನಾಲಿಗೆಯು ಚಾಡಿ ಹೇಳುವುದಿಲ್ಲ, ತಮ್ಮ ನೆರೆಯವರಿಗೆ ಕೇಡುಮಾಡುವುದಿಲ್ಲ, ಇತರರನ್ನು ನಿಂದಿಸುವುದೂ ಇಲ್ಲ;</verse>
				<verse number="4">ಅವರು ದುಷ್ಟರ ಸಹವಾಸ ಇಲ್ಲದವರೂ ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವರೂ ನಷ್ಟವಾದರೂ ಕೊಟ್ಟ ಮಾತನ್ನು ತಪ್ಪದೇ, ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳದವರೂ ಆಗಿರಬೇಕು.</verse>
				<verse number="5">ಅವರು ಬಡವರಿಗೆ ಸಾಲ ಕೊಟ್ಟು ಬಡ್ಡಿಕೇಳದವರೂ; ನಿರಪರಾಧಿಯ ಕೇಡಿಗಾಗಿ ಲಂಚ ತೆಗೆದುಕೊಳ್ಳದವರೂ ಆಗಿರಬೇಕು. ಈ ರೀತಿಯಾಗಿ ಬಾಳುವವರು ಎಂದಿಗೂ ಕದಲುವುದಿಲ್ಲ.</verse>
			</chapter>
			<chapter number="16">
				<verse number="1">ನನ್ನ ದೇವರೇ, ನನ್ನನ್ನು ಕಾಪಾಡು, ಏಕೆಂದರೆ ನಿಮ್ಮಲ್ಲಿ ಆಶ್ರಯಪಡೆದಿದ್ದೇನೆ.</verse>
				<verse number="2">ನಾನು ಯೆಹೋವ ದೇವರಿಗೆ, “ನೀವೇ ನನ್ನ ಕರ್ತ; ನಿಮ್ಮನ್ನು ಬಿಟ್ಟು ನನಗಿಲ್ಲ ಒಳಿತು,” ಎಂದು ಹೇಳಿದೆನು.</verse>
				<verse number="3">ಭೂಲೋಕದಲ್ಲಿರುವ ದೇವಜನರ ಕುರಿತು, “ಇವರೇ ನನಗೆ ಶ್ರೇಷ್ಠರು. ಇವರಲ್ಲಿಯೇ ನನ್ನ ಎಲ್ಲಾ ಆನಂದವು,” ಎಂದು ಹೇಳುವೆನು.</verse>
				<verse number="4">ಇತರ ದೇವರುಗಳನ್ನು ಅವಲಂಬಿಸಿರುವವರಿಗೆ ವ್ಯಥೆಗಳು ಹೆಚ್ಚೆಚ್ಚಾಗುವವು. ಅವರಂತೆ ರಕ್ತ ಬಲಿಗಳನ್ನು ನಾನು ಅರ್ಪಿಸುವುದಿಲ್ಲ. ಅವರ ಹೆಸರುಗಳನ್ನೂ ನನ್ನ ತುಟಿಗಳಲ್ಲಿ ಉಚ್ಚರಿಸುವುದಿಲ್ಲ.</verse>
				<verse number="5">ಯೆಹೋವ ದೇವರೇ, ನೀವೇ ನನ್ನ ಪಾಲೂ, ನನ್ನ ಪಾತ್ರೆಯೂ ಆಗಿದ್ದೀರಿ; ನನ್ನ ಸ್ವಾಸ್ತ್ಯವನ್ನು ಸುರಕ್ಷಿತವಾಗಿ ಇಡುವವರು ನೀವೇ.</verse>
				<verse number="6">ನನ್ನ ಪಾಲಿಗೆ ಬಂದ ಮೇರೆಯ ಸ್ಥಳವೂ ಸುಂದರವಾದದ್ದು; ನಿಶ್ಚಯವಾಗಿಯೂ, ನನಗೆ ದೊರೆತ ಸ್ವತ್ತು ಆನಂದಕರವಾದದ್ದು.</verse>
				<verse number="7">ನನಗೆ ಸಮಾಲೋಚನೆ ನೀಡುತ್ತಿರುವ ಯೆಹೋವ ದೇವರನ್ನು ನಾನು ಸ್ತುತಿಸುತ್ತಿರುವೆನು; ರಾತ್ರಿಯಲ್ಲಿಯೂ ನನ್ನ ಹೃದಯವು ನನಗೆ ಬೋಧಿಸುತ್ತದೆ.</verse>
				<verse number="8">ನಾನು ಯೆಹೋವ ದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ. ಅವರು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲೆನು.</verse>
				<verse number="9">ಆದ್ದರಿಂದ ನನ್ನ ಹೃದಯ ಹರ್ಷಿಸುವುದು, ನನ್ನ ನಾಲಿಗೆ ಉಲ್ಲಾಸಗೊಳ್ಳುವುದು; ನನ್ನ ಶರೀರವು ಸಹ ಸುರಕ್ಷಿತವಾಗಿ ವಿಶ್ರಮಿಸುವುದು.</verse>
				<verse number="10">ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ; ನಿಮ್ಮ ನಂಬಿಗಸ್ತನನ್ನು ಕೊಳೆಯುವ ಅವಸ್ಥೆಗೆ ತರುವುದಿಲ್ಲ.</verse>
				<verse number="11">ಜೀವಮಾರ್ಗವನ್ನು ನನಗೆ ತಿಳಿಯಪಡಿಸುವಿರಿ. ನಿಮ್ಮ ಸನ್ನಿಧಿಯಲ್ಲಿ ಪರಿಪೂರ್ಣ ಸಂತೋಷವಿದೆ; ನಿಮ್ಮ ಬಲಗಡೆಯಲ್ಲಿ ನಿತ್ಯಾನಂದವೂ ಇರುತ್ತದೆ.</verse>
			</chapter>
			<chapter number="17">
				<verse number="1">ಯೆಹೋವ ದೇವರೇ, ನನ್ನ ಬೇಡಿಕೆ ನ್ಯಾಯವಾದದ್ದು, ನನ್ನ ಮೊರೆಗೆ ಕಿವಿಗೊಡಿರಿ. ನನ್ನ ಪ್ರಾರ್ಥನೆಯನ್ನು ಕೇಳಿರಿ, ಅದು ಕಪಟ ತುಟಿಗಳಿಂದ ಬಂದದ್ದಲ್ಲ.</verse>
				<verse number="2">ನನ್ನ ನ್ಯಾಯವು ನಿಮ್ಮಿಂದಲೇ ಬರಲಿ, ನಿಮ್ಮ ಕಣ್ಣುಗಳು ಸರಿಯಾದವುಗಳನ್ನೇ ನೋಡುತ್ತವೆ.</verse>
				<verse number="3">ನೀವು ನನ್ನ ಹೃದಯವನ್ನು ಶೋಧಿಸಿದರೂ, ನೀವು ರಾತ್ರಿಯಲ್ಲಿ ನನ್ನನ್ನು ಪರೀಕ್ಷಿಸಿ ವಿಚಾರಿಸಿದರೂ, ನಾನು ಕೆಟ್ಟಯೋಜನೆ ಮಾಡಿಕೊಳ್ಳಲಿಲ್ಲವೆಂದು ನೀವು ಕಂಡುಕೊಳ್ಳುವಿರಿ; ನನ್ನ ಬಾಯಿಯೂ ಅತಿಕ್ರಮಿಸುವುದಿಲ್ಲವೆಂದು ನಾನು ತೀರ್ಮಾನಿಸಿಕೊಂಡಿದ್ದೇನೆ.</verse>
				<verse number="4">ಮನುಷ್ಯರು ನನಗೆ ಲಂಚ ನೀಡಲು ಪ್ರಯತ್ನಿಸಿದರೂ, ನಿಮ್ಮ ತುಟಿಗಳ ಆಜ್ಞಾನುಸಾರ ನಾನು ಹಿಂಸಕರ ಮಾರ್ಗಗಳಿಂದ ನನ್ನನ್ನು ದೂರವಾಗಿಟ್ಟುಕೊಂಡಿದ್ದೇನೆ.</verse>
				<verse number="5">ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿಮ್ಮ ದಾರಿಯಲ್ಲಿ ಸ್ಥಿರಪಡಿಸಿಕೊಂಡಿದ್ದೇನೆ.</verse>
				<verse number="6">ನನ್ನ ದೇವರೇ, ನೀವು ನನಗೆ ಉತ್ತರ ಕೊಡುವುದರಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನೀವು ನಿಮ್ಮ ಕಿವಿಯನ್ನು ನನ್ನ ಕಡೆ ತಿರುಗಿಸಿ, ನನ್ನ ಪ್ರಾರ್ಥನೆಯನ್ನು ಆಲಿಸಿರಿ.</verse>
				<verse number="7">ನಿಮ್ಮ ಒಡಂಬಡಿಕೆಯ ಪ್ರೀತಿಯ ಅದ್ಭುತವನ್ನು ನನಗೆ ತೋರಿಸಿರಿ. ತಮ್ಮ ವೈರಿಗಳಿಂದ ಓಡಿಬಂದು ನಿಮ್ಮಲ್ಲಿ ಆಶ್ರಯ ಪಡೆಯುವವರಿಗೆ ಭುಜಬಲದಿಂದ ರಕ್ಷಿಸುವವರು ನೀವೇ.</verse>
				<verse number="8">ನಿಮ್ಮ ಕಣ್ಣುಗುಡ್ಡೆಯ ಹಾಗೆ ನನ್ನನ್ನು ಕಾಪಾಡಿರಿ, ನಿಮ್ಮ ರೆಕ್ಕೆಗಳ ನೆರಳಿನಲ್ಲಿ ನನ್ನನ್ನು ಮರೆಮಾಡಿರಿ.</verse>
				<verse number="9">ನನ್ನನ್ನು ಬಾಧಿಸುವ ದುಷ್ಟರಿಂದಲೂ, ನನ್ನನ್ನು ಸುತ್ತಿಕೊಳ್ಳುವ ನನ್ನ ಪ್ರಾಣಾಂತಕ ಶತ್ರುಗಳಿಂದಲೂ ತಪ್ಪಿಸಿ.</verse>
				<verse number="10">ಅವರು ತಮ್ಮ ಸೊಕ್ಕಿನ ಹೃದಯಗಳನ್ನು ಮುಚ್ಚಿಕೊಂಡಿದ್ದಾರೆ, ತಮ್ಮ ಬಾಯಿಂದ ಅವರು ಗರ್ವವನ್ನು ಮಾತನಾಡುತ್ತಾರೆ.</verse>
				<verse number="11">ನನ್ನನ್ನು ಬೀಳಿಸುವಂತೆ, ಅವರು ಈಗ ನನ್ನನ್ನು ಸುತ್ತಿಕೊಂಡಿದ್ದಾರೆ, ನನ್ನನ್ನು ನೆಲಕ್ಕೆ ಹಾಕಬೇಕೆಂದು ಅವರ ಕಣ್ಣುಗಳು ಕಾದಿವೆ.</verse>
				<verse number="12">ಅವರು ತಮ್ಮ ಬೇಟೆಯ ಹಸಿವೆಯಿಂದಿರುವ ಸಿಂಹದ ಹಾಗೆಯೂ, ಗುಪ್ತಸ್ಥಳಗಳಲ್ಲಿ ಹೊಂಚಿ ಕುಳಿತಿರುವ ಭೀಕರ ಸಿಂಹದ ಹಾಗೆಯೂ ಇದ್ದಾರೆ.</verse>
				<verse number="13">ಯೆಹೋವ ದೇವರೇ, ಎದ್ದು ಅವರನ್ನು ಎದುರಿಸಿ ಕೆಳಗೆ ಕೆಡವಿಬಿಡಿರಿ; ನಿಮ್ಮ ಖಡ್ಗದ ಮೂಲಕ ನನ್ನನ್ನು ದುಷ್ಟರಿಂದ ಕಾಪಾಡಿರಿ.</verse>
				<verse number="14">ಯೆಹೋವ ದೇವರೇ, ಈ ಲೋಕಜೀವನದಲ್ಲಿಯಷ್ಟೇ ಪ್ರತಿಫಲವೆಂದು ತಿಳಿಯುವ ಜನರಿಂದ, ನನ್ನನ್ನು ನಿಮ್ಮ ಹಸ್ತದ ಮೂಲಕ ರಕ್ಷಿಸಿ ಕಾಪಾಡಿರಿ. ಅಂಥ ಜನರಿಗಾಗಿ ನೀವು ಸಂಗ್ರಹಿಸಿ ಇಟ್ಟಿರುವುದು ಅವರ ಹೊಟ್ಟೆ ತುಂಬಲಿ; ಅವರ ಮಕ್ಕಳು ಅದರಿಂದ ಸಮೃದ್ಧಿ ಹೊಂದಲಿ, ಅವರ ಚಿಕ್ಕಮಕ್ಕಳಿಗೂ ಉಳಿದದ್ದು ಸಿಕ್ಕಲಿ.</verse>
				<verse number="15">ನಾನಾದರೋ ನೀತಿಯಲ್ಲಿ ನಿಮ್ಮ ಮುಖವನ್ನು ನೋಡುವೆನು. ನಾನು ಎಚ್ಚೆತ್ತಾಗ ನಿಮ್ಮ ಹೋಲಿಕೆಯನ್ನೇ ಕಂಡು ತೃಪ್ತನಾಗುವೆನು.</verse>
			</chapter>
			<chapter number="18">
				<verse number="1">ನನ್ನ ಬಲವಾಗಿರುವ ಯೆಹೋವ ದೇವರೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆ.</verse>
				<verse number="2">ಯೆಹೋವ ದೇವರು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕರೂ ಆಗಿದ್ದಾರೆ; ನನ್ನ ಬಂಡೆಯಾದ ದೇವರಲ್ಲಿ, ನಾನು ಭರವಸವಿಡುವೆನು ಅವರು ನನ್ನ ಗುರಾಣಿ ಮತ್ತು ನನ್ನ ರಕ್ಷಣೆಯ ಕೊಂಬು, ನನ್ನ ಉನ್ನತವಾದ ದುರ್ಗ ಆಗಿದ್ದಾರೆ.</verse>
				<verse number="3">ಸ್ತುತಿ ಪಾತ್ರರಾಗಿರುವ ಯೆಹೋವ ದೇವರನ್ನು ನಾನು ಮೊರೆಯಿಟ್ಟದ್ದರಿಂದ, ಅವರು ನನ್ನ ಶತ್ರುಗಳಿಂದ ನನ್ನನ್ನು ಕಾಪಾಡಿದ್ದಾರೆ.</verse>
				<verse number="4">ಮರಣದ ಪಾಶಗಳು ನನ್ನನ್ನು ಸುತ್ತಿಕೊಂಡವು; ವಿನಾಶಪ್ರವಾಹಗಳು ನನ್ನ ಮೇಲೆ ಹರಿದವು.</verse>
				<verse number="5">ಪಾತಾಳದ ಪಾಶಗಳು ನನ್ನನ್ನು ಸುತ್ತಿಕೊಂಡವು; ಮರಣದ ಬಲೆಗಳು ನನ್ನನ್ನು ಎದುರಿಸಿದವು.</verse>
				<verse number="6">ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು; ನನ್ನ ಮೊರೆಯು ಅವರ ಸನ್ನಿಧಿ ಸೇರಿ ಅವರ ಕಿವಿಗೆ ಬಿತ್ತು.</verse>
				<verse number="7">ದೇವರು ಬೇಸರಗೊಂಡಿದ್ದರಿಂದ ಭೂಮಿಯು ನಡುಗಿ ಕದಲಿದವು; ಪರ್ವತಗಳ ಅಸ್ತಿವಾರಗಳು ಸಹ ಕದಲಿದವು.</verse>
				<verse number="8">ಮೂಗಿನಿಂದ ಹೊಗೆ ಬಂದಂತೆಯೂ ಬಾಯಿಯೊಳಗಿಂದ ದಹಿಸುವ ಅಗ್ನಿ ಹೊರಟಂತೆಯೂ; ಕೆಂಡಗಳು ಅದರಿಂದ ಜ್ವಾಲಿಸಿದಂತೆಯೂ ಇರಲು,</verse>
				<verse number="9">ದೇವರು ಆಕಾಶಗಳನ್ನು ಬಾಗಿಸಿ ಕೆಳಗಿಳಿದು ಬಂದರು; ಅವರ ಪಾದಗಳ ಕೆಳಗೆ ಕಾರ್ಮೋಡಗಳಿದ್ದವು.</verse>
				<verse number="10">ಅವರು ಕೆರೂಬಿಯ ಮೇಲೆ ಕೂತು ಹಾರಿದರು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿಕೊಂಡರು.</verse>
				<verse number="11">ಅವರು ಕತ್ತಲನ್ನು ತಮ್ಮ ಹೊದಿಕೆಯನ್ನಾಗಿಯೂ ಮಳೆ ತರುವ ಆಕಾಶದ ಕಾರ್ಮೋಡಗಳನ್ನು ತಮ್ಮ ಸುತ್ತಲಿನ ಪರದೆಯನ್ನಾಗಿಯೂ ಮಾಡಿಕೊಂಡರು.</verse>
				<verse number="12">ಅವರ ಸನ್ನಿಧಿಯ ಪ್ರಕಾಶದಿಂದ ಮೋಡಗಳು, ಕಲ್ಮಳೆ ಹಾಗೂ ಗುಡುಗು ಮಿಂಚುಗಳು ಹೊರಹೊಮ್ಮಿದವು.</verse>
				<verse number="13">ಯೆಹೋವ ದೇವರು ಆಕಾಶಗಳಲ್ಲಿ ಗುಡುಗಿದರು; ಮಹೋನ್ನತ ದೇವರ ಧ್ವನಿಯು ಕಲ್ಮಳೆ ಹಾಗೂ ಮಿಂಚುಗಳಿಂದ ಪ್ರತಿಧ್ವನಿಸಿತು.</verse>
				<verse number="14">ಅವರು ತಮ್ಮ ಬಾಣಗಳನ್ನು ಎಸೆದು ವೈರಿಗಳನ್ನು ಚದರಿಸಿದರು; ಸಿಡಿಲಿನಿಂದ ವೈರಿಗಳನ್ನೆಲ್ಲ ಅಟ್ಟಿಸಿಬಿಟ್ಟರು.</verse>
				<verse number="15">ಯೆಹೋವ ದೇವರೇ, ನಿಮ್ಮ ಗದರಿಕೆಯಿಂದಲೂ, ನಿಮ್ಮ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ತಳವು ಕಾಣಿಸಿದವು, ಭೂಲೋಕದ ಅಸ್ತಿವಾರಗಳು ಬಯಲಾದವು.</verse>
				<verse number="16">ಅವರು ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು ಅಗಾಧವಾದ ಜಲರಾಶಿಗಳಿಂದ ಹೊರಗೆಳೆದರು.</verse>
				<verse number="17">ಅವರು ನನಗಿಂತ ಶಕ್ತಿಶಾಲಿಯಾದ ಶತ್ರುಗಳಿಂದ, ದ್ವೇಷಿಸುತ್ತಿದ್ದ ವೈರಿಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದರು.</verse>
				<verse number="18">ನನ್ನ ಆಪತ್ತಿನ ದಿನದಲ್ಲಿ ನನ್ನನ್ನು ಆ ಶತ್ರುಗಳು ದಾಳಿಮಾಡಿದರು; ಆದರೆ ಯೆಹೋವ ದೇವರು ನನಗೆ ಆಧಾರವಾಗಿದ್ದರು.</verse>
				<verse number="19">ದೇವರು ನನ್ನನ್ನು ಹೊರಗೆ ವಿಶಾಲ ಸ್ಥಳಕ್ಕೆ ತಂದರು; ನನ್ನಲ್ಲಿ ಸಂತೋಷಪಟ್ಟದ್ದರಿಂದ ನನ್ನನ್ನು ಕಾಪಾಡಿದರು.</verse>
				<verse number="20">ಯೆಹೋವ ದೇವರು ನನ್ನ ನೀತಿಯ ಪ್ರಕಾರ ನನ್ನೊಂದಿಗೆ ವ್ಯವಹರಿಸಿದರು; ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಪ್ರತಿಫಲಕೊಟ್ಟರು.</verse>
				<verse number="21">ಏಕೆಂದರೆ ನಾನು ಯೆಹೋವ ದೇವರ ಮಾರ್ಗಗಳನ್ನು ಕೈಗೊಂಡೆನು; ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.</verse>
				<verse number="22">ದೇವರ ಆಜ್ಞೆಗಳೆಲ್ಲಾ ನನ್ನ ಮುಂದೆ ಇಟ್ಟುಕೊಂಡೆನು; ಅವರ ತೀರ್ಪುಗಳಿಂದ ನಾನು ತೊಲಗಿಹೋಗಲಿಲ್ಲ.</verse>
				<verse number="23">ನಾನು ಅವರ ದೃಷ್ಟಿಯಲ್ಲಿ ನಿರ್ದೋಷಿಯು ನಾನು ಪಾಪದಿಂದ ನನ್ನನ್ನು ಕಾಪಾಡಿಕೊಂಡೆನು.</verse>
				<verse number="24">ಆದ್ದರಿಂದ ಯೆಹೋವ ದೇವರು ನನ್ನ ನೀತಿಯ ಪ್ರಕಾರವೂ ಅವರ ದೃಷ್ಟಿಯಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಪ್ರತಿಫಲಕೊಟ್ಟರು.</verse>
				<verse number="25">ದಯವಂತರಿಗೆ ನೀವು ನಿಮ್ಮನ್ನು ದಯವಂತರಾಗಿ ತೋರಿಸುತ್ತೀರಿ. ನಿರ್ದೋಷಿಗೆ ನೀವು ನಿರ್ದೋಷಿಯಾಗಿ ತೋರಿಸುತ್ತೀರಿ.</verse>
				<verse number="26">ಶುದ್ಧರಿಗೆ ನೀವು ಶುದ್ಧರಾಗಿ ತೋರಿಸುತ್ತೀರಿ. ವಕ್ರ ವ್ಯಕ್ತಿಗೆ ನಿಮ್ಮ ಬುದ್ಧಿವಂತಿಕೆಯನ್ನು ತೋರಿಸುತ್ತೀರಿ.</verse>
				<verse number="27">ದೀನರನ್ನು ರಕ್ಷಿಸುತ್ತೀರಿ, ಆದರೆ ನೀವು ಗರ್ವಿಷ್ಠರ ಕಣ್ಣುಗಳನ್ನು ತಗ್ಗಿಸುತ್ತೀರಿ.</verse>
				<verse number="28">ಯೆಹೋವ ದೇವರೇ, ನೀವು ನನ್ನ ದೀಪವನ್ನು ಬೆಳಗಿಸಿರಿ. ನನ್ನ ದೇವರು ನನ್ನ ಕತ್ತಲೆಯನ್ನು ಬೆಳಕನ್ನಾಗಿ ಮಾರ್ಪಡಿಸುವರು.</verse>
				<verse number="29">ನಿಮ್ಮ ಸಹಾಯದಿಂದ ವೈರಿಸೇನೆಯ ವಿರುದ್ಧ ಹೋಗುವೆನು, ನನ್ನ ದೇವರೊಂದಿಗೆ ಕೋಟೆಗೋಡೆಯನ್ನೂ ಹಾರುವೆನು.</verse>
				<verse number="30">ದೇವರ ಮಾರ್ಗವು ಪರಿಪೂರ್ಣವಾದದ್ದು, ಯೆಹೋವ ದೇವರ ವಾಕ್ಯವು ದೋಷವಿಲ್ಲದ್ದು; ತಮ್ಮಲ್ಲಿ ಆಶ್ರಯ ಹೊಂದಿದ ಎಲ್ಲರಿಗೂ ಅವರು ಗುರಾಣಿಯಾಗಿದ್ದಾರೆ.</verse>
				<verse number="31">ಏಕೆಂದರೆ ಯೆಹೋವ ದೇವರಲ್ಲದೆ ಬೇರೆ ದೇವರು ಯಾರು? ಮತ್ತು ನಮ್ಮ ದೇವರನ್ನು ಹೊರತುಪಡಿಸಿ ರಕ್ಷಕ ಯಾರು?</verse>
				<verse number="32">ಬಲದಿಂದ ನನಗೆ ಆಯುಧವನ್ನು ಧರಿಸುವಂತೆ ಮಾಡಿ, ನನ್ನ ಮಾರ್ಗವನ್ನು ಸುರಕ್ಷಿತಗೊಳಿಸುವ ದೇವರು ಅವರೇ.</verse>
				<verse number="33">ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಚುರುಕು ಮಾಡಿ, ಅವರು ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾರೆ.</verse>
				<verse number="34">ಅವರು ಯುದ್ಧಕ್ಕಾಗಿ ನನ್ನ ಕೈಗಳಿಗೆ ತರಬೇತುಕೊಟ್ಟು, ನನ್ನ ಭುಜದಿಂದ ಕಂಚಿನ ಬಿಲ್ಲನ್ನು ಬಗ್ಗಿಸುವಂತೆ ಮಾಡುತ್ತಾರೆ.</verse>
				<verse number="35">ನಿಮ್ಮ ರಕ್ಷಣೆಯ ಸಹಾಯವನ್ನು ನನಗೆ ಗುರಾಣಿಯನ್ನಾಗಿ ಮಾಡಿದ್ದೀರಿ. ನಿಮ್ಮ ಬಲಗೈ ನನಗೆ ಆಧಾರವಾಗಿದೆ; ನಿಮ್ಮ ಸಹಾಯವು ನನ್ನನ್ನು ಘನವಂತನನ್ನಾಗಿ ಮಾಡಿದೆ.</verse>
				<verse number="36">ನೀವು ನನ್ನ ಕಾಲಡಿಗಳಿಗೆ ವಿಶಾಲಸ್ಥಳ ಒದಗಿಸಿದ್ದೀರಿ, ಆದುದರಿಂದ ನನ್ನ ಹಿಮ್ಮಡಿಗಳು ಜಾರುವುದಿಲ್ಲ.</verse>
				<verse number="37">ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದಿದ್ದೇನೆ; ಅವರನ್ನು ಸಂಹರಿಸಿಬಿಡುವವರೆಗೂ ನಾನು ಹಿಂದಿರುಗಲಿಲ್ಲ.</verse>
				<verse number="38">ಏಳಲಾರದಂತೆ ಅವರನ್ನು ತುಳಿದುಬಿಟ್ಟೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದರು.</verse>
				<verse number="39">ನೀವು ಯುದ್ಧಕ್ಕಾಗಿ ನನಗೆ ಬಲವನ್ನು ಆಯುಧವನ್ನಾಗಿ ನೀಡಿ, ನನ್ನ ಎದುರಾಳಿಗಳನ್ನು ನನಗೆ ಅಧೀನ ಮಾಡಿದ್ದೀರಿ.</verse>
				<verse number="40">ನನ್ನ ಶತ್ರುಗಳು ನನಗೆ ಬೆನ್ನುಮಾಡಿ ಓಡಿಹೋಗುವಂತೆ ಮಾಡಿದಿರಿ; ನಾನು ನನ್ನ ವೈರಿಗಳನ್ನು ಸಂಹರಿಸಿದೆನು.</verse>
				<verse number="41">ಅವರು ಸಹಾಯಕ್ಕಾಗಿ ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇರಲಿಲ್ಲ ಯೆಹೋವ ದೇವರಿಗೂ ಮೊರೆಯಿಟ್ಟರು, ಆದರೆ ಅವರೂ ಉತ್ತರ ಕೊಡಲಿಲ್ಲ.</verse>
				<verse number="42">ಅವರನ್ನು ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳಿನಂತೆ ಪುಡಿಪುಡಿ ಮಾಡಿದೆನು; ಬೀದಿಯಲ್ಲಿನ ಕೆಸರು ಎಂಬಂತೆ ತುಳಿದು ಎಸೆದುಬಿಟ್ಟೆನು.</verse>
				<verse number="43">ನೀವು ನನ್ನ ಜನರ ಒಳಕಲಹದಿಂದ ನನ್ನನ್ನು ತಪ್ಪಿಸಿದ್ದೀರಿ; ನನ್ನನ್ನು ಜನಾಂಗಗಳಿಗೆ ನಾಯಕನನ್ನಾಗಿ ಮಾಡಿರುವಿರಿ. ನಾನು ಅರಿಯದ ಜನರು ನನಗೆ ವಿಧೇಯರಾಗುವರು.</verse>
				<verse number="44">ವಿದೇಶಿಯರು ನನಗೆ ಅಧೀನರಾದರು; ನನ್ನ ಸುದ್ದಿ ಕೇಳಿದ ಕೂಡಲೇ ನನಗೆ ವಿಧೇಯರಾಗುವರು.</verse>
				<verse number="45">ಅವರು ಭಯಗೊಳ್ಳುವರು; ನಡುಗುತ್ತಾ ತಮ್ಮ ಕೋಟೆಗಳಿಂದ ಹೊರಬರುವರು.</verse>
				<verse number="46">ಯೆಹೋವ ದೇವರು ಜೀವಿಸುವ ದೇವರು! ನನ್ನ ಆಶ್ರಯವಾಗಿರುವ ದೇವರಿಗೆ ಸ್ತೋತ್ರವಾಗಲಿ. ನನ್ನ ರಕ್ಷಕರಾದ ದೇವರು ಮಹಿಮೆ ಹೊಂದಲಿ.</verse>
				<verse number="47">ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುವವರೂ ಜನರನ್ನು ನನಗೆ ಅಧೀನಪಡಿಸುವವರೂ ಆಗಿದ್ದಾರೆ.</verse>
				<verse number="48">ದೇವರು ನನ್ನ ಶತ್ರುಗಳಿಂದ ನನ್ನನ್ನು ಬಿಡಿಸುತ್ತಾರೆ; ನೀವು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀರಿ, ಬಲಾತ್ಕಾರ ಮಾಡುವವನಿಂದ ನನ್ನನ್ನು ರಕ್ಷಿಸುತ್ತೀರಿ.</verse>
				<verse number="49">ಆದ್ದರಿಂದ ಯೆಹೋವ ದೇವರೇ, ನಾನು ಜನಾಂಗಗಳಲ್ಲಿ ನಿಮ್ಮನ್ನು ಕೊಂಡಾಡುವೆನು, ನಿಮ್ಮನ್ನು ಕೊಂಡಾಡಿ ನಿಮ್ಮ ಹೆಸರನ್ನು ಕೀರ್ತಿಸುವೆನು.</verse>
				<verse number="50">ದೇವರು ತಮ್ಮ ಅರಸನಿಗೆ ವಿಶೇಷ ರಕ್ಷಣೆಯನ್ನು ಕೊಡುವರು; ತಮ್ಮ ಅಭಿಷಿಕ್ತನಿಗೂ ದಾವೀದನಿಗೂ ಅವನ ಸಂತತಿಯವರಿಗೂ ಒಡಂಬಡಿಕೆಯ ಪ್ರೀತಿಯನ್ನು ಯುಗಯುಗಕ್ಕೂ ಅನುಗ್ರಹಿಸುವರು.</verse>
			</chapter>
			<chapter number="19">
				<verse number="1">ಆಕಾಶವು ದೇವರ ಮಹಿಮೆಯನ್ನು ಸಾರುತ್ತದೆ; ಅಂತರಿಕ್ಷವು ಅವರ ಕೈಕೆಲಸವನ್ನು ಘೋಷಿಸುತ್ತದೆ.</verse>
				<verse number="2">ಹಗಲೆಲ್ಲಾ ಅವು ಮಾತನಾಡುತ್ತವೆ; ರಾತ್ರಿಯೆಲ್ಲಾ ಅವು ಅರಿವನ್ನು ಪ್ರಕಟಿಸುತ್ತವೆ.</verse>
				<verse number="3">ಅವುಗಳಿಗೆ ಮಾತೂ ಇಲ್ಲ, ಪದವೂ ಇಲ್ಲ, ಅವುಗಳ ಸ್ವರವು ಕೇಳುವುದೂ ಇಲ್ಲ.</verse>
				<verse number="4">ಅವುಗಳ ಧ್ವನಿ ಭೂಲೋಕವೆಲ್ಲಾ ಹರಡಿವೆ; ಅವುಗಳ ಮಾತುಗಳೋ ಲೋಕದ ಕಟ್ಟಕಡೆಯವರೆಗೂ ಹೋಗುತ್ತವೆ; ಆಕಾಶದಲ್ಲಿ ದೇವರು ಸೂರ್ಯನಿಗೆ ಗುಡಾರ ಹಾಕಿದ್ದಾರೆ.</verse>
				<verse number="5">ಸೂರ್ಯನು ಮದುಮಗನಂತೆ ತನ್ನ ಕೊಠಡಿಯಿಂದ ಹೊರಟುಬಂದು, ಪಂದ್ಯಕ್ಕೆ ಹರ್ಷದಿಂದ ಓಡುವ ಪರಾಕ್ರಮಶಾಲಿಯಂತೆ ಇದ್ದಾನೆ.</verse>
				<verse number="6">ಆಕಾಶದ ಒಂದು ಕಡೆಯಿಂದ ಉದಯಿಸಿ ಮತ್ತೊಂದು ಕಡೆಯವರೆಗೆ ಹೊರಟು ಪ್ರಯಾಣಿಸುತ್ತಾನೆ; ಅದರ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.</verse>
				<verse number="7">ಯೆಹೋವ ದೇವರ ನಿಯಮವು ಸಂಪೂರ್ಣವಾಗಿದ್ದು, ಪ್ರಾಣಕ್ಕೆ ಜೀವಕರವಾಗಿದೆ; ಯೆಹೋವ ದೇವರ ಶಾಸನಗಳು ವಿಶ್ವಾಸಪಾತ್ರವಾಗಿದ್ದು, ಮುಗ್ಧನನ್ನು ಜ್ಞಾನಿಗಳನ್ನಾಗಿ ಮಾಡುತ್ತವೆ.</verse>
				<verse number="8">ಯೆಹೋವ ದೇವರ ಸೂತ್ರಗಳು ನೀತಿಯುಳ್ಳವುಗಳಾಗಿದ್ದು ಅವು ಹೃದಯಕ್ಕೆ ಆನಂದಕರವಾಗಿವೆ; ಯೆಹೋವ ದೇವರ ಆಜ್ಞೆಗಳು ಸ್ಪಷ್ಟವಾಗಿದ್ದು, ಕಣ್ಣುಗಳಿಗೆ ಪ್ರಕಾಶಕರವಾಗಿವೆ.</verse>
				<verse number="9">ಯೆಹೋವ ದೇವರ ಭಯವು ಶುದ್ಧವಾಗಿದ್ದು, ಎಂದೆಂದಿಗೂ ಶಾಶ್ವತವಾಗಿದೆ. ಯೆಹೋವ ದೇವರ ತೀರ್ಪುಗಳು ಸತ್ಯವಾಗಿದ್ದು, ಅವೆಲ್ಲವೂ ನೀತಿಯುಳ್ಳದ್ದಾಗಿವೆ.</verse>
				<verse number="10">ಅವು ಬಂಗಾರಕ್ಕಿಂತಲೂ, ಅಪರಂಜಿಗಿಂತಲೂ ಅಮೂಲ್ಯವಾಗಿವೆ; ಅವು ಜೇನಿಗಿಂತಲೂ, ಅಪ್ಪಟ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.</verse>
				<verse number="11">ನಿಮ್ಮ ಸೇವಕನು ಅವುಗಳಿಂದ ಎಚ್ಚರಿಕೆ ಪಡೆಯುತ್ತಾನೆ; ಅವುಗಳನ್ನು ಕೈಗೊಳ್ಳುವುದರಲ್ಲಿ ದೊಡ್ಡ ಪ್ರತಿಫಲವುಂಟು.</verse>
				<verse number="12">ತಮ್ಮ ತಪ್ಪುಗಳನ್ನು ತಿಳಿದುಕೊಳ್ಳಲು ಯಾರಿಗೆ ಸಾಧ್ಯ? ನನ್ನ ಗುಪ್ತ ಪಾಪಗಳನ್ನು ಕ್ಷಮಿಸು.</verse>
				<verse number="13">ಬೇಕುಬೇಕೆಂದು ಪಾಪಮಾಡದಂತೆ ನಿಮ್ಮ ಸೇವಕನನ್ನು ಕಾಪಾಡು; ಅಂಥ ಪಾಪಗಳು ನನ್ನ ಮೇಲೆ ಆಳಿಕೆ ಮಾಡದಿರಲಿ. ಆಗ ನಾನು ತಪ್ಪಿಲ್ಲದವನಾಗಿ, ಮಹಾಪರಾಧದಿಂದ ಬಿಡುಗಡೆಯಾಗಿರುವೆನು.</verse>
				<verse number="14">ಯೆಹೋವ ದೇವರೇ, ನನ್ನ ಬಂಡೆಯೇ, ನನ್ನ ವಿಮೋಚಕರೇ, ನನ್ನ ಬಾಯಿಯ ಮಾತುಗಳೂ ನನ್ನ ಹೃದಯದ ಧ್ಯಾನವೂ ನಿಮ್ಮ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ.</verse>
			</chapter>
			<chapter number="20">
				<verse number="1">ಯೆಹೋವ ದೇವರು ಇಕ್ಕಟ್ಟಿನಲ್ಲಿ ನಿಮಗೆ ಉತ್ತರವನ್ನು ನೀಡಲಿ; ಯಾಕೋಬನ ದೇವರ ಹೆಸರು ನಿಮ್ಮನ್ನು ಕಾಪಾಡಲಿ.</verse>
				<verse number="2">ದೇವರು ಪರಿಶುದ್ಧ ಸ್ಥಳದೊಳಗಿಂದ ನಿಮಗೆ ಸಹಾಯ ಕಳುಹಿಸಲಿ; ಅವರು ಚೀಯೋನಿನಿಂದ ನಿಮಗೆ ಆಧಾರ ನೀಡಲಿ.</verse>
				<verse number="3">ನಿಮ್ಮ ಯಜ್ಞಾರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿಕೊಂಡು, ನಿಮ್ಮ ದಹನಬಲಿಗಳನ್ನು ಸ್ವೀಕರಿಸಲಿ.</verse>
				<verse number="4">ದೇವರು ನಿಮ್ಮ ಹೃದಯದ ಬಯಕೆಯನ್ನು ನಿಮಗೆ ದಯಪಾಲಿಸಲಿ; ನಿಮ್ಮ ಎಲ್ಲಾ ಯೋಜನೆಗಳಲ್ಲಿಯೂ ಯಶಸ್ಸನ್ನು ನೀಡಲಿ.</verse>
				<verse number="5">ನಾವು ದೇವರ ಜಯದಲ್ಲಿ ಆನಂದ ಘೋಷಮಾಡಿ, ನಮ್ಮ ದೇವರ ಹೆಸರಿನಲ್ಲಿಯೇ ನಾವು ನಮ್ಮ ಧ್ವಜಗಳನ್ನು ಎತ್ತುವೆವು. ಯೆಹೋವ ದೇವರು ನಿಮ್ಮ ಬಿನ್ನಹಗಳನ್ನೆಲ್ಲಾ ಪೂರೈಸಲಿ.</verse>
				<verse number="6">ಈಗ ನಾನು ಇದನ್ನು ಬಲ್ಲೆನು: ಯೆಹೋವ ದೇವರು ತಮ್ಮ ಅಭಿಷಿಕ್ತನಿಗೆ ಜಯ ನೀಡುವರು. ತಮ್ಮ ಜಯದ ಬಲಗೈಯ ಶಕ್ತಿಯಿಂದಲೂ ತಮ್ಮ ಪರಿಶುದ್ಧ ಪರಲೋಕದಿಂದಲೂ ಅವನಿಗೆ ಉತ್ತರಕೊಡುವರು.</verse>
				<verse number="7">ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳಲ್ಲಿಯೂ ಭರವಸೆಯಿಡುತ್ತಾರೆ; ನಾವಾದರೋ ನಮ್ಮ ಯೆಹೋವ ದೇವರ ಹೆಸರಿನಲ್ಲಿ ಭರವಸೆಯನ್ನಿಡುತ್ತೇವೆ.</verse>
				<verse number="8">ಅವರು ಬಗ್ಗಿ ಬೀಳುತ್ತಾರೆ, ನಾವಾದರೋ ಎದ್ದು ಸ್ಥಿರವಾಗಿ ನಿಲ್ಲುವೆವು.</verse>
				<verse number="9">ಯೆಹೋವ ದೇವರೇ, ಅರಸನಿಗೆ ಜಯಕೊಡಿರಿ! ನಾವು ಕರೆಯುವಾಗ ನಮಗೆ ಉತ್ತರಕೊಡಿರಿ!</verse>
			</chapter>
			<chapter number="21">
				<verse number="1">ಯೆಹೋವ ದೇವರೇ, ನಿಮ್ಮ ಬಲದಲ್ಲಿ ಅರಸನು ಆನಂದಿಸುತ್ತಾನೆ; ನೀವು ಆತನಿಗೆ ಕೊಡುವ ಜಯಗಳಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುತ್ತಾನೆ!</verse>
				<verse number="2">ಅರಸನ ಹೃದಯದ ಆಶೆಯನ್ನು ನೀವು ಈಡೇರಿಸಿದ್ದೀರಿ; ಆತನ ತುಟಿಗಳ ಬಿನ್ನಹವನ್ನು ಹಿಂದಿಟ್ಟುಕೊಳ್ಳಲಿಲ್ಲ.</verse>
				<verse number="3">ನೀವು ಉತ್ತಮ ಆಶೀರ್ವಾದಗಳಿಂದ ಅರಸನನ್ನು ಸ್ವಾಗತಿಸಿದ್ದೀರಿ; ಚೊಕ್ಕ ಬಂಗಾರದ ಕಿರೀಟವನ್ನು ಆತನ ತಲೆಯ ಮೇಲಿಟ್ಟಿದ್ದೀರಿ.</verse>
				<verse number="4">ಜೀವವನ್ನು ಅರಸನು ನಿಮ್ಮಿಂದ ಬೇಡಲು, ನೀವು ಆತನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟಿದ್ದೀರಿ.</verse>
				<verse number="5">ನೀವು ಕೊಟ್ಟ ಜಯಗಳ ಮೂಲಕ ಅರಸನ ಪ್ರಭಾವ ಹೆಚ್ಚಾಗಿದೆ; ಗೌರವವನ್ನೂ ಘನತೆಯನ್ನೂ ಆತನ ಮೇಲೆ ಇಟ್ಟಿರುತ್ತೀರಿ.</verse>
				<verse number="6">ನೀವು ನಿಶ್ಚಯವಾಗಿ ಅರಸನಿಗೆ ನಿತ್ಯ ಆಶೀರ್ವಾದ ದಯಪಾಲಿಸಿದ್ದೀರಿ; ನಿಮ್ಮ ಸನ್ನಿಧಿಯಲ್ಲಿ ಆತನು ಅಧಿಕ ಆನಂದಪಡುವಂತೆ ಮಾಡಿದ್ದೀರಿ.</verse>
				<verse number="7">ಏಕೆಂದರೆ ಅರಸನು ಯೆಹೋವ ದೇವರಲ್ಲಿ ಭರವಸೆ ಇಡುತ್ತಾನೆ; ಮಹೋನ್ನತರ ಒಡಂಬಡಿಕೆಯ ಪ್ರೀತಿಯಿಂದ ಅರಸನು ಕದಲದೆ ಇರುವನು.</verse>
				<verse number="8">ನಿಮ್ಮ ಹಸ್ತವು ನಿಮ್ಮ ಶತ್ರುಗಳನ್ನೆಲ್ಲಾ ವಶಪಡಿಸಿಕೊಳ್ಳುವುದು. ನಿಮ್ಮ ಬಲಗೈ ನಿಮ್ಮ ವೈರಿಗಳನ್ನು ಸಿಕ್ಕಿಸುವುದು.</verse>
				<verse number="9">ನೀವು ಬರುವ ಕಾಲದಲ್ಲಿ ಅವರನ್ನು ಅಗ್ನಿಕುಂಡದಂತೆ ದಹಿಸಿಬಿಡುವಿರಿ. ಯೆಹೋವ ದೇವರು ತಮ್ಮ ಬೇಸರದಿಂದ ಅವರನ್ನು ದಂಡಿಸಿಬಿಡುವರು; ಬೆಂಕಿಯು ಅವರನ್ನು ಭಸ್ಮ ಮಾಡುವುದು.</verse>
				<verse number="10">ಅವರ ವಂಶವನ್ನು ಭೂಲೋಕದೊಳಗಿಂದಲೂ ಅವರ ಸಂತತಿಯನ್ನು ಮಾನವರೊಳಗಿಂದಲೂ ಉಳಿಯದಿರಲಿ.</verse>
				<verse number="11">ಅವರು ನಿಮಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು, ಅವರು ಕುಯುಕ್ತಿಯನ್ನು ಕಲ್ಪಿಸಿದರೂ ಅದು ಕೈಗೂಡದಿರಲಿ.</verse>
				<verse number="12">ನಿಮ್ಮ ಬಿಲ್ಲನ್ನು ಅವರಿಗೆ ವಿರೋಧವಾಗಿ ಎತ್ತುವಾಗ ಅವರು ನಿಮಗೆ ಬೆನ್ನುಮಾಡಿ ಓಡಿಹೋಗಲಿ.</verse>
				<verse number="13">ಯೆಹೋವ ದೇವರೇ, ನಿಮ್ಮ ಬಲದಲ್ಲಿ ಉನ್ನತರಾಗಿದ್ದೀರಿ, ನಾವು ನಿಮ್ಮ ಪರಾಕ್ರಮವನ್ನು ಹಾಡಿ ಕೀರ್ತಿಸುವೆವು.</verse>
			</chapter>
			<chapter number="22">
				<verse number="1">ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀರಿ? ನನ್ನನ್ನು ರಕ್ಷಿಸದೆ ಏಕೆ ದೂರವಾಗಿದ್ದೀರಿ? ನನ್ನ ನರಳುವಿಕೆಯ ಮೊರೆಗೆ ಉತ್ತರ ಕೊಡದೆ ಏಕೆ ದೂರವಾಗಿದ್ದೀರಿ?</verse>
				<verse number="2">ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ, ಆದರೆ ನೀವು ಉತ್ತರ ಕೊಡುವುದಿಲ್ಲ; ರಾತ್ರಿಯಲ್ಲಿಯೂ ನನಗೆ ವಿಶ್ರಾಂತಿ ಇರುವುದಿಲ್ಲ.</verse>
				<verse number="3">ನೀವು ಪರಿಶುದ್ಧರು; ನೀವು ಇಸ್ರಾಯೇಲರ ಸ್ತೋತ್ರ ಸಿಂಹಾಸನದಲ್ಲಿರುವಿರಿ.</verse>
				<verse number="4">ನಿಮ್ಮಲ್ಲಿಯೇ ನಮ್ಮ ಪಿತೃಗಳು ಭರವಸೆಯಿಟ್ಟರು; ಅವರು ಭರವಸೆಯಿಟ್ಟಿದ್ದರಿಂದ ನೀವು ಅವರನ್ನು ವಿಮೋಚಿಸಿದಿರಿ.</verse>
				<verse number="5">ಅವರು ನಿಮಗೆ ಮೊರೆಯಿಟ್ಟದ್ದರಿಂದ ನೀವು ಅವರನ್ನು ರಕ್ಷಿಸಿದಿರಿ; ನಿಮ್ಮಲ್ಲಿ ಭರವಸೆಯಿಟ್ಟಿದ್ದರಿಂದ ಅವರು ಅಪಮಾನಕ್ಕೆ ಗುರಿಯಾಗಲಿಲ್ಲ.</verse>
				<verse number="6">ಆದರೆ ನಾನು ಹುಳದಂಥವನೇ ಹೊರತು ಮನುಷ್ಯನಲ್ಲ; ನಾನು ಮನುಷ್ಯರಿಂದ ನಿಂದೆ ಹಾಗು ತಿರಸ್ಕಾರಕ್ಕೆ ಗುರಿಯಾಗಿದ್ದೇನೆ.</verse>
				<verse number="7">ನನ್ನನ್ನು ನೋಡುವವರೆಲ್ಲರೂ ನನ್ನನ್ನು ಗೇಲಿಮಾಡುತ್ತಾರೆ. ಅವರು ತಲೆ ಆಡಿಸುತ್ತಾ ಹೀಗೆ ಅವಮಾನಪಡಿಸುತ್ತಾರೆ:</verse>
				<verse number="8">“ಆತನು ಯೆಹೋವ ದೇವರ ಮೇಲೆ ಭರವಸೆಯಿಟ್ಟಿದ್ದಾನಲ್ಲಾ, ಯೆಹೋವ ದೇವರೇ ಆತನನ್ನು ಕಾಪಾಡಲಿ. ಯೆಹೋವ ದೇವರು ಆತನಲ್ಲಿ ಹರ್ಷಿಸುವುದಾದರೆ, ಅವರೇ ಆತನನ್ನು ಬಿಡಿಸಲಿ.”</verse>
				<verse number="9">ತಾಯಿಯ ಗರ್ಭದೊಳಗಿಂದ ನನ್ನನ್ನು ಹೊರತಂದವರು ನೀವು; ನನ್ನ ತಾಯಿಯ ಎದೆಯಲ್ಲಿ ಇದ್ದಾಗಲೇ ನಾನು ನಿಮ್ಮಲ್ಲಿ ಭರವಸೆಯಿಡುವಂತೆ ಮಾಡಿದಿರಿ.</verse>
				<verse number="10">ಹುಟ್ಟಿದಂದಿನಿಂದಲೇ ನೀವೇ ನನಗೆ ಆಧಾರ ನನ್ನ ತಾಯಿಯ ಗರ್ಭದಿಂದಲೇ ನೀವು ನನ್ನ ದೇವರು.</verse>
				<verse number="11">ನನ್ನಿಂದ ದೂರವಾಗಿರಬೇಡಿರಿ, ಏಕೆಂದರೆ ಇಕ್ಕಟ್ಟು ಸಮೀಪವಾಗಿದೆ, ಸಹಾಯಕರು ನನಗೆ ಯಾರೂ ಇಲ್ಲ.</verse>
				<verse number="12">ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.</verse>
				<verse number="13">ಹರಿದು ಬಿಡುವ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿತೆರೆದಿದ್ದಾರೆ.</verse>
				<verse number="14">ನಾನು ಚೆಲ್ಲಿದ ನೀರಿನಂತಿದ್ದೇನೆ, ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿ ಹೋಗಿದೆ. ನನ್ನ ಹೃದಯವು ಮೇಣದ ಹಾಗೆ ನನ್ನೊಳಗೆ ಕರಗಿಹೋಗಿದೆ.</verse>
				<verse number="15">ನನ್ನ ಬಾಯಿ ಬೋಕಿಯ ಹಾಗೆ ಒಣಗಿಹೋಗಿದೆ, ನನ್ನ ನಾಲಿಗೆ ಅಂಗಳಕ್ಕೆ ಹತ್ತಿದೆ, ನೀವು ನನ್ನನ್ನು ಮಣ್ಣಿಗೆ ಸೇರಿಸುವಿರಿ.</verse>
				<verse number="16">ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಗುಂಪು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.</verse>
				<verse number="17">ನನ್ನ ಎಲುಬುಗಳನ್ನೆಲ್ಲಾ ಎಣಿಸುವಂತಾಗಿದೆ; ಅವರು ನನ್ನನ್ನು ಕಂಡು ಹಿಗ್ಗುತ್ತಾರೆ.</verse>
				<verse number="18">ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲು ಮಾಡಿಕೊಳ್ಳುತ್ತಾರೆ; ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ.</verse>
				<verse number="19">ಆದರೆ ಯೆಹೋವ ದೇವರೇ, ನೀವು ನನ್ನಿಂದ ದೂರವಾಗಿರಬೇಡಿರಿ; ನೀವು ನನ್ನ ಬಲವಾಗಿದ್ದೀರಿ, ನನ್ನ ಸಹಾಯಕ್ಕೆ ಬೇಗ ಬನ್ನಿರಿ.</verse>
				<verse number="20">ನನ್ನ ಪ್ರಾಣವನ್ನು ಖಡ್ಗದಿಂದಲೂ ನನ್ನ ಅಮೂಲ್ಯ ಜೀವವನ್ನು ನಾಯಿಗಳ ಬಲದಿಂದಲೂ ಬಿಡಿಸಿರಿ.</verse>
				<verse number="21">ಸಿಂಹಗಳ ಬಾಯಿಂದ ನನ್ನನ್ನು ರಕ್ಷಿಸಿರಿ; ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು ತಪ್ಪಿಸಿರಿ.</verse>
				<verse number="22">ನಾನು ನಿಮ್ಮ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಸಭಾ ಮಧ್ಯದಲ್ಲಿ ನಿಮ್ಮನ್ನು ಸ್ತುತಿಸುವೆನು.</verse>
				<verse number="23">ಯೆಹೋವ ದೇವರಿಗೆ ಭಯಪಡುವವರೇ, ಅವರನ್ನು ಸ್ತುತಿಸಿರಿ; ಯಾಕೋಬನ ಎಲ್ಲಾ ಸಂತತಿಯವರೇ, ಅವರನ್ನು ಕೊಂಡಾಡಿರಿ; ಇಸ್ರಾಯೇಲರ ಎಲ್ಲಾ ಸಂತತಿಯವರೇ, ಅವರಲ್ಲಿ ಭಯಭಕ್ತಿಯುಳ್ಳವರಾಗಿರಿ.</verse>
				<verse number="24">ಏಕೆಂದರೆ ಸಂಕಟಪಡುವವನ ಸಂಕಟವನ್ನು ಅವರು ತಿರಸ್ಕರಿಸಲಿಲ್ಲ, ಅಸಹ್ಯಪಡಲಿಲ್ಲ; ತಮ್ಮ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಆತನು ಮೊರೆ ಇಡಲು, ಅವರು ಕೇಳಿದರು.</verse>
				<verse number="25">ಮಹಾಸಭೆಯಲ್ಲಿ ನಿಮ್ಮನ್ನು ಕುರಿತು ನನ್ನ ಸ್ತೋತ್ರವು ನಿಮ್ಮಿಂದ ಬರುವುದು; ನನ್ನ ಹರಕೆಗಳನ್ನು ನಿಮಗೆ ಭಯಪಡುವವರ ಮುಂದೆ ಸಲ್ಲಿಸುವೆನು.</verse>
				<verse number="26">ದೀನರು ಉಂಡು ತೃಪ್ತರಾಗುವರು; ಯೆಹೋವ ದೇವರನ್ನು ಹುಡುಕುವವರು ಅವರನ್ನು ಸ್ತುತಿಸುವರು; ಅಂಥವರ ಹೃದಯವು ಎಂದೆಂದಿಗೂ ಚೈತನ್ಯ ಹೊಂದಲಿ.</verse>
				<verse number="27">ಲೋಕದಲ್ಲಿರುವ ಎಲ್ಲರೂ ಎಚ್ಚರವಾಗಿ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳುವರು; ಜನಾಂಗಗಳ ಕುಟುಂಬಗಳೆಲ್ಲಾ ದೇವರ ಮುಂದೆ ಅಡ್ಡಬೀಳುವವು.</verse>
				<verse number="28">ಏಕೆಂದರೆ ರಾಜ್ಯವು ಯೆಹೋವ ದೇವರದೇ; ಜನಾಂಗಗಳನ್ನು ಆಳುವವರು ಅವರೇ.</verse>
				<verse number="29">ಭೂಮಿಯ ಶ್ರೀಮಂತರೆಲ್ಲರು ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರು ಅವರ ಮುಂದೆ ಅಡ್ಡಬೀಳುವರು.</verse>
				<verse number="30">ಸಂತಾನವು ದೇವರನ್ನು ಸೇವಿಸುವುದು; ಮುಂದಿನ ಸಂತತಿಗಳಿಗೆ ಯೆಹೋವ ದೇವರ ಬಗ್ಗೆ ಹೇಳಲಾಗುವುದು.</verse>
				<verse number="31">ಆ ಸಂತತಿಯವರು ದೇವರ ನೀತಿಯನ್ನು ಇನ್ನೂ ಜನಿಸದ ಜನಾಂಗಕ್ಕೆ ಸಾರಿ ತಿಳಿಸುವರು, ಏಕೆಂದರೆ ಇದನ್ನೆಲ್ಲ ಮಾಡಿದವರು ದೇವರೇ!</verse>
			</chapter>
			<chapter number="23">
				<verse number="1">ಯೆಹೋವ ದೇವರು ನನ್ನ ಕುರುಬ ಆಗಿದ್ದಾರೆ, ನನಗೆ ಕೊರತೆಯೇ ಇಲ್ಲ.</verse>
				<verse number="2">ಅವರು ಹಸಿರುಗಾವಲುಗಳಲ್ಲಿ ನನ್ನನ್ನು ವಿಶ್ರಮಿಸುವಂತೆ ಮಾಡುತ್ತಾರೆ; ಪ್ರಶಾಂತ ಜಲರಾಶಿಯ ಬಳಿಗೆ ನನ್ನನ್ನು ನಡೆಸುತ್ತಾರೆ.</verse>
				<verse number="3">ಅವರು ನನ್ನ ಪ್ರಾಣವನ್ನು ಚೈತನ್ಯಗೊಳಿಸುತ್ತಾರೆ. ತಮ್ಮ ಹೆಸರಿನ ನಿಮಿತ್ತ ನನ್ನನ್ನು ನೀತಿ ಮಾರ್ಗದಲ್ಲಿ ನಡೆಸುತ್ತಾರೆ.</verse>
				<verse number="4">ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀವು ನನ್ನೊಂದಿಗಿರುವುದರಿಂದ ನಾನು ಕೇಡಿಗೆ ಹೆದರೆನು; ನಿಮ್ಮ ದೊಣ್ಣೆಯೂ ನಿಮ್ಮ ಕೋಲೂ ನನ್ನನ್ನು ಸಂತೈಸುತ್ತವೆ.</verse>
				<verse number="5">ನೀವು ನನ್ನ ವೈರಿಗಳ ಮುಂದೆಯೇ ನನಗೊಂದು ಔತಣವನ್ನು ಸಿದ್ಧಮಾಡುತ್ತೀರಿ. ನೀವು ನನ್ನ ತಲೆಗೆ ತೈಲವನ್ನು ಅಭಿಷೇಕಿಸುತ್ತೀರಿ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.</verse>
				<verse number="6">ನಿಶ್ಚಯವಾಗಿ ಶುಭವೂ ಪ್ರೀತಿಯೂ ನನ್ನ ಜೀವಮಾನವೆಲ್ಲಾ ನನ್ನನ್ನು ಹಿಂಬಾಲಿಸುತ್ತವೆ; ನಾನು ಯೆಹೋವ ದೇವರ ಮನೆಯಲ್ಲಿ ಸದಾಕಾಲವೂ ವಾಸಿಸುವೆನು.</verse>
			</chapter>
			<chapter number="24">
				<verse number="1">ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರದ್ದೇ; ಲೋಕವೂ ಅದರ ನಿವಾಸಿಗಳೂ ಅವರಿಗೇ ಸೇರಿದ್ದು.</verse>
				<verse number="2">ಏಕೆಂದರೆ ಅವರು ಸಮುದ್ರಗಳ ಮೇಲೆ ಅದನ್ನು ಸ್ಥಾಪಿಸಿ ಪ್ರವಾಹಗಳ ಮೇಲೆ ಅದನ್ನು ಸ್ಥಿರಪಡಿಸಿದ್ದಾರೆ.</verse>
				<verse number="3">ಯೆಹೋವ ದೇವರ ಪರ್ವತವನ್ನು ಹತ್ತುವವನು ಯಾರು? ಅವರ ಪರಿಶುದ್ಧ ಸ್ಥಳದಲ್ಲಿ ನಿಲ್ಲುವವನು ಯಾರು?</verse>
				<verse number="4">ಶುದ್ಧಹಸ್ತಗಳೂ ನಿರ್ಮಲವಾದ ಹೃದಯವೂ ಉಳ್ಳವನಾಗಿದ್ದು; ವಂಚನೆಯಿಂದ ಮುಕ್ತನಾಗಿ, ಮೋಸದಿಂದ ಆಣೆ ಇಡದೆಯೂ ಇರುವವನೇ.</verse>
				<verse number="5">ಇಂಥವರೇ ಯೆಹೋವ ದೇವರಿಂದ ಆಶೀರ್ವಾದವನ್ನು ಹೊಂದುವರು. ತಮ್ಮ ರಕ್ಷಕ ಆಗಿರುವ ದೇವರಿಂದಲೇ ನಿರ್ದೋಷಿಯಾಗುವರು.</verse>
				<verse number="6">ಇಂಥವರೇ ದೇವರನ್ನು ಹುಡುಕುವ ಸಂತತಿಯು; ಯಾಕೋಬನ ದೇವರೇ, ನಿಮ್ಮನ್ನು ಹುಡುಕುವವರು ಇಂಥವರೇ.</verse>
				<verse number="7">ದ್ವಾರಗಳೇ ತಲೆ ಎತ್ತಿ ನೋಡಿರಿ, ಪುರಾತನ ದ್ವಾರಗಳೇ, ತೆರೆದುಕೊಳ್ಳಿರಿ; ಮಹಿಮೆಯ ಅರಸ ಒಳಗೆ ಬರಲಿದ್ದಾರೆ.</verse>
				<verse number="8">ಈ ಮಹಿಮೆಯ ಅರಸ ಯಾರು? ಬಲವೂ ಪರಾಕ್ರಮವೂ ಉಳ್ಳ ಯೆಹೋವ ದೇವರೇ ಆಗಿರುತ್ತಾರೆ. ಯೆಹೋವ ದೇವರು ಯುದ್ಧದಲ್ಲಿ ಪರಾಕ್ರಮವುಳ್ಳವರು ಆಗಿರುತ್ತಾರೆ.</verse>
				<verse number="9">ದ್ವಾರಗಳೇ, ತಲೆ ಎತ್ತಿ ನೋಡಿರಿ, ಪುರಾತನ ದ್ವಾರಗಳೇ, ತೆರೆದುಕೊಳ್ಳಿರಿ; ಮಹಿಮೆಯ ಅರಸ ಒಳಗೆ ಬರಲಿದ್ದಾರೆ.</verse>
				<verse number="10">ಮಹಿಮೆಯ ಅರಸ ಯಾರು? ಸೇನಾಧೀಶ್ವರ ಯೆಹೋವ ದೇವರೇ ಆಗಿರುತ್ತಾರೆ. ಇವರೇ ಮಹಿಮೆಯ ಅರಸರು.</verse>
			</chapter>
			<chapter number="25">
				<verse number="1">ಯೆಹೋವ ದೇವರೇ, ನಿಮ್ಮಲ್ಲಿ ಭರವಸೆಯಿಟ್ಟಿದ್ದೇನೆ.</verse>
				<verse number="2">ನನ್ನ ದೇವರೇ, ನಾನು ನಿಮ್ಮಲ್ಲಿ ಭರವಸೆಯಿಟ್ಟಿದ್ದೇನೆ; ನಾನು ನಾಚಿಕೆಪಡದಂತೆ ಮಾಡಿರಿ; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.</verse>
				<verse number="3">ನಿಮ್ಮನ್ನು ನಿರೀಕ್ಷಿಸುವವರಲ್ಲಿ ಯಾರೂ ನಾಚಿಕೆಪಡದಿರಲಿ; ನಿಷ್ಕಾರಣವಾಗಿ ವಂಚನೆ ಮಾಡುವವರು ನಾಚಿಕೆಪಡಲಿ.</verse>
				<verse number="4">ಯೆಹೋವ ದೇವರೇ, ನಿಮ್ಮ ಮಾರ್ಗಗಳನ್ನು ನನಗೆ ತೋರಿಸಿರಿ; ನಿಮ್ಮ ದಾರಿಗಳನ್ನು ನನಗೆ ಕಲಿಸಿರಿ.</verse>
				<verse number="5">ನಿಮ್ಮ ಸತ್ಯದಲ್ಲಿ ಮಾರ್ಗದರ್ಶನ ನೀಡಿ ನನಗೆ ಬೋಧಿಸಿರಿ; ಏಕೆಂದರೆ ನೀವು ನನ್ನ ರಕ್ಷಕ ಆಗಿರುವ ದೇವರಾಗಿದ್ದೀರಿ; ನಿಮ್ಮನ್ನು ನಾನು ದಿನವೆಲ್ಲಾ ನಿರೀಕ್ಷಿಸುತ್ತಿದ್ದೇನೆ.</verse>
				<verse number="6">ಯೆಹೋವ ದೇವರೇ, ಆದಿಯಿಂದಿರುವ ನಿಮ್ಮ ಅನುಕಂಪವನ್ನೂ ನಿಮ್ಮ ಪ್ರೀತಿಯನ್ನೂ, ಕರುಣೆಯನ್ನೂ ಜ್ಞಾಪಕಮಾಡಿಕೊಳ್ಳಿರಿ.</verse>
				<verse number="7">ಯೆಹೋವ ದೇವರೇ, ನನ್ನ ಯೌವನದ ಪಾಪಗಳನ್ನೂ, ನನ್ನ ತಿರುಗಿ ಬೀಳುವಿಕೆಗಳನ್ನೂ ಜ್ಞಾಪಕ ಮಾಡಿಕೊಳ್ಳಬೇಡಿರಿ. ನೀವು ಒಳ್ಳೆಯವರಾಗಿರುವುದರಿಂದ ನಿಮ್ಮ ಪ್ರೀತಿಯ ಪ್ರಕಾರ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ.</verse>
				<verse number="8">ಯೆಹೋವ ದೇವರು ಒಳ್ಳೆಯವರೂ ನ್ಯಾಯವುಳ್ಳವರೂ ಆಗಿದ್ದಾರೆ; ಆದ್ದರಿಂದ ಅವರು ಪಾಪಿಗಳಿಗೆ ತಮ್ಮ ಮಾರ್ಗಗಳನ್ನು ಬೋಧಿಸುತ್ತಾರೆ.</verse>
				<verse number="9">ದೀನರನ್ನು ನ್ಯಾಯ ಮಾರ್ಗದಲ್ಲಿ ನಡೆಸಿ, ದೀನರಿಗೆ ತಮ್ಮ ಮಾರ್ಗವನ್ನು ಬೋಧಿಸುತ್ತಾರೆ.</verse>
				<verse number="10">ಯೆಹೋವ ದೇವರ ಒಡಂಬಡಿಕೆಯನ್ನು ಕೈಗೊಳ್ಳುವವರಿಗೆ ಅವರ ದಾರಿಯೆಲ್ಲವು ಪ್ರೀತಿ, ಸತ್ಯದಿಂದ ತುಂಬಿರುತ್ತವೆ.</verse>
				<verse number="11">ನನ್ನ ಅನ್ಯಾಯವು ಬಹು ಘೋರವಾಗಿದ್ದರೂ ನಿಮ್ಮ ಹೆಸರಿನ ನಿಮಿತ್ತ ಯೆಹೋವ ದೇವರೇ ನನ್ನನ್ನು ಮನ್ನಿಸಿರಿ.</verse>
				<verse number="12">ಯಾವನು ಯೆಹೋವ ದೇವರಿಗೆ ಭಯಪಡುವನೋ, ಅಂಥವನಿಗೆ ಅವರು ಆಯ್ದುಕೊಳ್ಳತಕ್ಕ ಮಾರ್ಗವನ್ನು ಬೋಧಿಸುವರು.</verse>
				<verse number="13">ಅಂಥವರು ಜೀವಮಾನವೆಲ್ಲಾ ಸಫಲರಾಗಿರುವರು. ಅಂಥವರ ಸಂತಾನವು ದೇಶವನ್ನು ಸ್ವಾಧೀನ ಮಾಡಿಕೊಳ್ಳುವುದು.</verse>
				<verse number="14">ಯೆಹೋವ ದೇವರ ರಹಸ್ಯವು ಅವರಿಗೆ ಭಯಪಡುವವರೊಂದಿಗೆ ಇರುವುದು; ತಮ್ಮ ಒಡಂಬಡಿಕೆಯನ್ನು ಅವರು ಅಂಥವರಿಗೇ ತಿಳಿಸುವರು.</verse>
				<verse number="15">ನನ್ನ ಕಣ್ಣುಗಳು ಯಾವಾಗಲೂ ಯೆಹೋವ ದೇವರ ಕಡೆಗೆ ಇರುತ್ತವೆ; ಏಕೆಂದರೆ ಅವರೇ ನನ್ನ ಪಾದಗಳನ್ನು ಬಲೆಯಿಂದ ಬಿಡಿಸುವವರು.</verse>
				<verse number="16">ನೀವು ನನ್ನ ಕಡೆಗೆ ತಿರುಗಿ ನನ್ನನ್ನು ಕರುಣಿಸಿರಿ; ನಾನು ಒಬ್ಬಂಟಿಗನಾಗಿಯೂ ಬಾಧೆಪಡುವವನಾಗಿಯೂ ಇದ್ದೇನೆ.</verse>
				<verse number="17">ನನ್ನ ಹೃದಯದ ಕಷ್ಟಗಳನ್ನು ಪರಿಹರಿಸಿರಿ; ನೀವು ನನ್ನ ಸಂಕಟಗಳಿಂದ ನನ್ನನ್ನು ಬಿಡಿಸಿರಿ.</verse>
				<verse number="18">ನನ್ನ ಬಾಧೆಯನ್ನೂ ವ್ಯಥೆಯನ್ನೂ ನೋಡಿರಿ; ನನ್ನ ಪಾಪಗಳನ್ನೆಲ್ಲಾ ತೆಗೆದುಹಾಕಿರಿ.</verse>
				<verse number="19">ನನ್ನ ಶತ್ರುಗಳನ್ನು ನೋಡಿರಿ, ಅವರು ಹೆಚ್ಚಾಗಿದ್ದಾರೆ; ತೀವ್ರ ಹಗೆಯಿಂದ ಅವರು ನನ್ನನ್ನು ದ್ವೇಷಿಸುತ್ತಾರೆ.</verse>
				<verse number="20">ನನ್ನ ಪ್ರಾಣವನ್ನು ಕಾಪಾಡಿ, ನನ್ನನ್ನು ಬಿಡಿಸಿರಿ; ನಾನು ನಾಚಿಕೆಪಡದಂತೆ ಮಾಡಿರಿ, ಏಕೆಂದರೆ ನಾನು ನಿಮ್ಮಲ್ಲಿ ಆಶ್ರಯಪಡೆದಿದ್ದೇನೆ.</verse>
				<verse number="21">ಯಥಾರ್ಥತೆಯೂ ನಿಷ್ಕಪಟವೂ ನನ್ನನ್ನು ಕಾಯಲಿ, ಏಕೆಂದರೆ ನನ್ನ ನಿರೀಕ್ಷೆಯು ನಿಮ್ಮ ಮೇಲೆ ಇದೆ.</verse>
				<verse number="22">ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ವಿಮೋಚಿಸಿರಿ.</verse>
			</chapter>
			<chapter number="26">
				<verse number="1">ಯೆಹೋವ ದೇವರೇ, ನನ್ನನ್ನು ನಿರ್ದೋಷನನ್ನಾಗಿ ನಿರ್ಣಯಿಸಿರಿ, ನಾನು ದೋಷವಿಲ್ಲದ ಜೀವನ ನಡೆಸಿದ್ದೇನೆ; ನಾನು ಯೆಹೋವ ದೇವರಲ್ಲಿ ಕದಲದೆ ಭರವಸೆ ಇಟ್ಟಿದ್ದೇನೆ.</verse>
				<verse number="2">ಯೆಹೋವ ದೇವರೇ, ನನ್ನನ್ನು ಶೋಧಿಸಿ, ಪರೀಕ್ಷಿಸಿರಿ; ನನ್ನ ಅಂತರಿಂದ್ರಿಯಗಳನ್ನೂ ನನ್ನ ಹೃದಯವನ್ನೂ ಶೋಧಿಸಿರಿ.</verse>
				<verse number="3">ನಿಮ್ಮ ಒಡಂಬಡಿಕೆಯ ಪ್ರೀತಿಯು ಯಾವಾಗಲೂ ನನ್ನ ಮನಸ್ಸು ತುಂಬ ಇದೆ; ನಿಮ್ಮ ನಂಬಿಗಸ್ತಿಕೆಯಲ್ಲಿ ನಾನು ಬಾಳುತ್ತಿದ್ದೇನೆ.</verse>
				<verse number="4">ಮೋಸಗಾರರ ಸಂಗಡ ನಾನು ಕುಳಿತುಕೊಳ್ಳಲಿಲ್ಲ; ವಂಚಕರ ಸಂಗಡ ನಾನು ಹೋಗುವುದಿಲ್ಲ.</verse>
				<verse number="5">ದುರ್ಮಾರ್ಗಿಗಳ ಸಭೆಯನ್ನು ದ್ವೇಷಿಸಿದ್ದೇನೆ; ದುಷ್ಟರ ಸಂಗಡ ಕುಳಿತುಕೊಳ್ಳುವುದಿಲ್ಲ.</verse>
				<verse number="6">ನನ್ನ ಕೈಗಳನ್ನು ನಿರ್ಮಲವಾಗಿ ತೊಳೆದುಕೊಂಡು, ಯೆಹೋವ ದೇವರೇ, ನಿಮ್ಮ ಬಲಿಪೀಠವನ್ನು ಸುತ್ತುತ್ತಾ,</verse>
				<verse number="7">ಸ್ತೋತ್ರ ಧ್ವನಿಯೆತ್ತಿ ಸಾರುತ್ತಾ ನಿಮ್ಮ ಅದ್ಭುತಗಳನ್ನೆಲ್ಲಾ ತಿಳಿಸುವೆನು.</verse>
				<verse number="8">ಯೆಹೋವ ದೇವರೇ, ನೀವು ವಾಸಿಸುವ ಆಲಯವನ್ನೂ, ನಿಮ್ಮ ಮಹಿಮೆಯ ನಿವಾಸವನ್ನೂ ಪ್ರೀತಿಸುತ್ತೇನೆ.</verse>
				<verse number="9">ಪಾಪಿಗಳ ಸಂಗಡ ನನ್ನ ಪ್ರಾಣವನ್ನೂ, ರಕ್ತಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡಿರಿ.</verse>
				<verse number="10">ಅವರ ಕೈಗಳಲ್ಲಿ ಕೇಡು ಇದೆ; ಅವರ ಬಲಗೈ ಲಂಚಗಳಿಂದ ತುಂಬಿದೆ.</verse>
				<verse number="11">ನಾನಾದರೋ ನನ್ನ ಯಥಾರ್ಥತೆಯಲ್ಲಿ ನಡೆಯುತ್ತೇನೆ; ನನ್ನನ್ನು ವಿಮೋಚಿಸಿರಿ; ನನಗೆ ಕರುಣೆಯುಳ್ಳವರಾಗಿರಿ.</verse>
				<verse number="12">ನನ್ನ ಪಾದವು ಸಮ ನೆಲದಲ್ಲಿ ನಿಂತಿದೆ; ನಾನು ಮಹಾಸಭೆಯಲ್ಲಿ ಯೆಹೋವ ದೇವರನ್ನು ಸ್ತುತಿಸುವೆನು.</verse>
			</chapter>
			<chapter number="27">
				<verse number="1">ಯೆಹೋವ ದೇವರು ನನ್ನ ಬೆಳಕೂ ನನ್ನ ರಕ್ಷಣೆಯೂ ಆಗಿದ್ದಾರೆ. ನಾನು ಯಾರಿಗೂ ಭಯಪಡೆನು? ಯೆಹೋವ ದೇವರು ನನ್ನ ಜೀವದ ಭದ್ರಾಶ್ರಯವಾಗಿದ್ದಾರೆ. ನಾನು ಯಾರಿಗೂ ಹೆದರೆನು?</verse>
				<verse number="2">ದುಷ್ಟರು ನನ್ನನ್ನು ಬೀಳಿಸಬೇಕೆಂದು ನನಗೆ ವಿರೋಧವಾಗಿ ಸಮೀಪಿಸುವಾಗ, ನನ್ನ ವೈರಿಗಳು ತಾವೇ ಎಡವಿಬಿದ್ದರು.</verse>
				<verse number="3">ನನಗೆ ವಿರೋಧವಾಗಿ ಇಳಿದರೂ ನನ್ನ ಹೃದಯವು ಭಯಪಡದು; ನನ್ನ ಮೇಲೆ ಯುದ್ಧ ಸೈನ್ಯವು ನಡೆದರೂ ನಾನು ಭರವಸೆಯಿಂದಿರುವೆನು.</verse>
				<verse number="4">ಯೆಹೋವ ದೇವರ ಮನೆಯಲ್ಲಿ ನಾನು ಜೀವಮಾನವೆಲ್ಲಾ ವಾಸಮಾಡುತ್ತಾ, ಅದರ ದಯೆಯನ್ನು ನೋಡುತ್ತಾ ಅವರ ಮಂದಿರದಲ್ಲಿ ಅವರನ್ನೇ ಧ್ಯಾನಿಸುತ್ತಾ ಇರಬೇಕೆಂಬ ಒಂದೇ ವರವನ್ನು ಯೆಹೋವ ದೇವರಿಂದ ಕೇಳಿಕೊಂಡು ಅದನ್ನೇ ಹುಡುಕುತ್ತಿರುವೆನು.</verse>
				<verse number="5">ಕೇಡಿನ ಸಮಯದಲ್ಲಿ ಯೆಹೋವ ದೇವರು ನನ್ನನ್ನು ತಮ್ಮ ಗುಡಾರದಲ್ಲಿ ಬಚ್ಚಿಡುವರು. ತಮ್ಮ ಪರಿಶುದ್ಧ ಗುಡಾರದಲ್ಲಿ ನನ್ನನ್ನು ಮರೆಮಾಡುವರು. ಎತ್ತರವಾದ ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವರು.</verse>
				<verse number="6">ಈಗ ನನ್ನ ತಲೆಯು ನನ್ನ ಸುತ್ತಲಿರುವ ನನ್ನ ಶತ್ರುಗಳ ಮೇಲೆ ಎತ್ತಲಾಗಿರುವುದು, ಆದ್ದರಿಂದ ದೇವರ ಗುಡಾರದಲ್ಲಿ ಉತ್ಸಾಹದಿಂದ ಬಲಿಗಳನ್ನು ಅರ್ಪಿಸುವೆನು; ಯೆಹೋವ ದೇವರಿಗೆ ಹಾಡಿ ಕೊಂಡಾಡುವೆನು.</verse>
				<verse number="7">ಯೆಹೋವ ದೇವರೇ, ನಾನು ಕೂಗುವ ಸ್ವರವನ್ನು ಕೇಳಿರಿ; ನನ್ನನ್ನು ಕರುಣಿಸಿ ಉತ್ತರವನ್ನು ಕೊಡಿರಿ.</verse>
				<verse number="8">ನಿಮ್ಮ ಬಗ್ಗೆ ನನ್ನ ಹೃದಯವು ಹೀಗೆ ಹೇಳುತ್ತದೆ: “ದೇವರ ಮುಖವನ್ನು ಹುಡುಕು,” ಆದ್ದರಿಂದ ಯೆಹೋವ ದೇವರೇ, ನಿಮ್ಮ ಮುಖವನ್ನೇ ಹುಡುಕುತ್ತಿರುವೆನು.</verse>
				<verse number="9">ನಿಮ್ಮ ಮುಖವನ್ನು ನನಗೆ ಮರೆಮಾಡಬೇಡಿರಿ; ನಿಮ್ಮ ಸೇವಕನಾದ ನನ್ನನ್ನು ತಳ್ಳಬೇಡಿರಿ; ನೀವೇ ನನಗೆ ಸಹಾಯಕರಾಗಿದ್ದೀರಿ; ನನ್ನ ರಕ್ಷಕ ಆಗಿರುವ ದೇವರೇ, ನನ್ನನ್ನು ತ್ಯಜಿಸಬೇಡಿರಿ. ನನ್ನನ್ನು ಬಿಟ್ಟುಬಿಡಬೇಡಿರಿ.</verse>
				<verse number="10">ನನ್ನ ತಂದೆತಾಯಂದಿರು ನನ್ನನ್ನು ಬಿಟ್ಟುಬಿಟ್ಟರೂ, ಯೆಹೋವ ದೇವರು ನನ್ನನ್ನು ಸೇರಿಸಿಕೊಳ್ಳುವರು.</verse>
				<verse number="11">ಯೆಹೋವ ದೇವರೇ, ನಿಮ್ಮ ಮಾರ್ಗವನ್ನು ನನಗೆ ಬೋಧಿಸಿರಿ; ನನ್ನ ವಿರೋಧಿಗಳ ನಿಮಿತ್ತ ಸಮಹಾದಿಯಲ್ಲಿ ನನ್ನನ್ನು ನಡೆಸಿರಿ.</verse>
				<verse number="12">ನನ್ನ ವೈರಿಗಳ ವಶಕ್ಕೆ ನನ್ನನ್ನು ಕೊಡಬೇಡಿರಿ; ಸುಳ್ಳುಸಾಕ್ಷಿಗಳೂ ಕ್ರೂರ ನಿಂದಕರೂ ನನಗೆ ವಿರೋಧವಾಗಿ ಎದ್ದಿದ್ದಾರೆ.</verse>
				<verse number="13">ಇದೊಂದು ನನ್ನ ಭರವಸೆಯಾಗಿರುವುದು: ನಾನಂತೂ ಯೆಹೋವ ದೇವರ ಒಳಿತನ್ನು ಜೀವಿತರ ದೇಶದಲ್ಲಿ ಕಾಣುವೆನು.</verse>
				<verse number="14">ಯೆಹೋವ ದೇವರಿಗಾಗಿ ಕಾದಿರು, ಧೈರ್ಯವಾಗಿರು; ಅವರು ನಿನ್ನ ಹೃದಯವನ್ನು ದೃಢಪಡಿಸುವರು; ಯೆಹೋವ ದೇವರಿಗಾಗಿ ಕಾದಿರು.</verse>
			</chapter>
			<chapter number="28">
				<verse number="1">ಯೆಹೋವ ದೇವರೇ, ನೀವು ನನಗೆ ಸಂರಕ್ಷಿಸುವ ಬಂಡೆಯಾಗಿದ್ದೀರಿ. ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ, ಮೌನವಾಗಿರಬೇಡಿರಿ; ನೀವು ಸುಮ್ಮನಿದ್ದರೆ ನಾನು ಸಮಾಧಿಯಲ್ಲಿದ್ದವನಿಗೆ ಸಮಾನನಾಗುವೆನು.</verse>
				<verse number="2">ನಾನು ನಿಮಗೆ ಮೊರೆಯಿಡುವಾಗ, ನನ್ನ ಕೈಗಳನ್ನು ನಿಮ್ಮ ಮಹಾಪರಿಶುದ್ಧ ಸ್ಥಳದ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯನ್ನು ಲಾಲಿಸಿರಿ.</verse>
				<verse number="3">ದುಷ್ಟರ ಸಂಗಡವೂ ಅಪರಾಧ ಮಾಡುವವರ ಸಂಗಡವೂ ನನ್ನನ್ನು ಎಳೆಯಬೇಡಿರಿ; ಅವರು ತಮ್ಮ ನೆರೆಯವರೊಂದಿಗೆ ಸಮಾಧಾನವಾಗಿ ಮಾತನಾಡುತ್ತಾರೆ; ಆದರೆ ಕೇಡು ಅವರ ಹೃದಯದಲ್ಲಿ ಇದೆ.</verse>
				<verse number="4">ಅವರ ಕೃತ್ಯಗಳ ಪ್ರಕಾರವಾಗಿಯೂ, ಅವರ ಕೆಟ್ಟತನಗಳ ಪ್ರಕಾರವಾಗಿಯೂ ಅವರಿಗೆ ಪ್ರತಿಫಲಕೊಡಿರಿ; ಅವರ ಕೈಕೃತ್ಯಗಳ ಪ್ರಕಾರವಾಗಿ ಅವರಿಗೆ ಕೊಡಿರಿ, ಅರ್ಹತೆಗೆ ತಕ್ಕಂತೆಯೇ ಅವರಿಗೆ ಬರಮಾಡಿರಿ.</verse>
				<verse number="5">ಅವರು ಯೆಹೋವ ದೇವರ ಕೃತ್ಯಗಳನ್ನೂ, ಅವರ ಕೈಗಳ ಕೆಲಸವನ್ನೂ ಲಕ್ಷಿಸುವುದಿಲ್ಲ; ಆದ್ದರಿಂದ ದೇವರು ಅವರನ್ನು ವೃದ್ಧಿಗೊಳಿಸದೆ ದಂಡಿಸುವರು.</verse>
				<verse number="6">ಯೆಹೋವ ದೇವರಿಗೆ ಸ್ತುತಿಯುಂಟಾಗಲಿ; ಕರುಣೆಗಾಗಿ ನನ್ನ ಮೊರೆಯನ್ನು ಅವರು ಕೇಳಿದ್ದಾರೆ.</verse>
				<verse number="7">ಯೆಹೋವ ದೇವರು ನನ್ನ ಬಲವೂ, ನನ್ನ ಗುರಾಣಿಯೂ ಆಗಿದ್ದಾರೆ; ನನ್ನ ಹೃದಯವು ಅವರಲ್ಲಿ ಭರವಸೆ ಇಟ್ಟದ್ದರಿಂದ ನಾನು ಸಹಾಯ ಹೊಂದಿದೆನು; ನನ್ನ ಹೃದಯವು ಬಹಳವಾಗಿ ಉತ್ಸಾಹಪಡುವುದು; ನನ್ನ ಕೀರ್ತನೆಯಿಂದ ಅವರನ್ನು ಕೊಂಡಾಡುವೆನು.</verse>
				<verse number="8">ಯೆಹೋವ ದೇವರು ತಮ್ಮ ಜನರಿಗೆ ಬಲವಾಗಿದ್ದಾರೆ; ತಮ್ಮ ಅಭಿಷಿಕ್ತನಿಗೆ ರಕ್ಷಣೆಯ ಕೋಟೆ ಆಗಿದ್ದಾರೆ.</verse>
				<verse number="9">ನಿಮ್ಮ ಜನರನ್ನು ರಕ್ಷಿಸಿರಿ; ನಿಮ್ಮ ವಾರಸುದಾರರನ್ನು ಆಶೀರ್ವದಿಸಿರಿ; ನೀವು ಅವರ ಕುರುಬ ಆಗಿದ್ದು; ಅವರನ್ನು ಯಾವಾಗಲೂ ಮುನ್ನಡೆಸಿರಿ.</verse>
			</chapter>
			<chapter number="29">
				<verse number="1">ದೇವದೂತರೇ, ಬಲವು ಯೆಹೋವ ದೇವರದೇ, ಮಹಿಮೆ ಯೆಹೋವ ದೇವರದೇ ಎಂದು ಹೇಳಿ ಕೊಂಡಾಡಿರಿ.</verse>
				<verse number="2">ಯೆಹೋವ ದೇವರ ನಾಮಕ್ಕೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ವಸ್ತ್ರದೊಡನೆ ಯೆಹೋವ ದೇವರನ್ನು ಆರಾಧಿಸಿರಿ.</verse>
				<verse number="3">ಯೆಹೋವ ದೇವರ ಧ್ವನಿಯು ಜಲರಾಶಿಗಳ ಮೇಲೆ ಇದೆ; ಮಹಿಮೆಯ ದೇವರು ಇದ್ದಾರೆ; ಯೆಹೋವ ದೇವರು ಮಹಾಸಾಗರಗಳ ಮೇಲೆ ಇದ್ದಾರೆ.</verse>
				<verse number="4">ಯೆಹೋವ ದೇವರ ಧ್ವನಿಯು ಶಕ್ತಿಯುಳ್ಳದ್ದು; ಯೆಹೋವ ದೇವರ ಧ್ವನಿಯು ವೈಭವವುಳ್ಳದ್ದು.</verse>
				<verse number="5">ಯೆಹೋವ ದೇವರ ಧ್ವನಿಯು ದೇವದಾರು ವೃಕ್ಷಗಳನ್ನು ಮುರಿಯುತ್ತದೆ; ಯೆಹೋವ ದೇವರು ಲೆಬನೋನಿನ ದೇವದಾರು ವೃಕ್ಷಗಳನ್ನು ಮುರಿಯುತ್ತಾರೆ.</verse>
				<verse number="6">ಲೆಬನೋನ್ ಪರ್ವತವು ಕರುವಿನ ಹಾಗೆಯೂ ಸಿರ್ಯೋನ್ ಬೆಟ್ಟವು ಎಳೆಯ ಕಾಡುಕೋಣದ ಹಾಗೆಯೂ ಹಾರಾಡುವಂತೆ ಮಾಡುತ್ತಾರೆ.</verse>
				<verse number="7">ಯೆಹೋವ ದೇವರ ಧ್ವನಿಯು ಸಿಡಿಲಿನ ಮಿಂಚಿನಂತೆ ಅಪ್ಪಳಿಸುತ್ತದೆ.</verse>
				<verse number="8">ಯೆಹೋವ ದೇವರ ಶಬ್ದವು ಮರುಭೂಮಿಯನ್ನು ನಡುಗಿಸುತ್ತದೆ; ಯೆಹೋವ ದೇವರು ಕಾದೇಶ್ ಮರುಭೂಮಿಯನ್ನು ನಡುಗಿಸುತ್ತಾರೆ.</verse>
				<verse number="9">ಯೆಹೋವ ದೇವರ ಧ್ವನಿಯು ಜಿಂಕೆಗಳು ಈಯುವಂತೆ ಮಾಡಿ ಅಡವಿಗಳನ್ನು ಬಯಲು ಮಾಡುತ್ತದೆ; ದೇವರ ಮಂದಿರದಲ್ಲಿ ಪ್ರತಿಯೊಬ್ಬರೂ “ಮಹಿಮೆ!” ಎಂದು ಘೋಷಿಸುತ್ತಾರೆ.</verse>
				<verse number="10">ಯೆಹೋವ ದೇವರು ಪ್ರಳಯದ ಮೇಲೆ ಕುಳಿತುಕೊಳ್ಳುತ್ತಾರೆ; ಯುಗಯುಗಕ್ಕೂ ಯೆಹೋವ ದೇವರು ಅರಸರಾಗಿ ಕುಳಿತುಕೊಂಡಿದ್ದಾರೆ.</verse>
				<verse number="11">ಯೆಹೋವ ದೇವರು ತಮ್ಮ ಜನರಿಗೆ ಬಲವನ್ನು ಕೊಡುವರು; ಯೆಹೋವ ದೇವರು ತಮ್ಮ ಜನರನ್ನು ಸಮಾಧಾನದಿಂದ ಆಶೀರ್ವದಿಸುವರು.</verse>
			</chapter>
			<chapter number="30">
				<verse number="1">ಯೆಹೋವ ದೇವರೇ, ನಿಮ್ಮನ್ನು ಕೊಂಡಾಡುವೆನು; ನೀವು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿದ್ದೀರಿ. ನನ್ನನ್ನು ಮೇಲಕ್ಕೆ ಎತ್ತಿದ್ದೀರಿ.</verse>
				<verse number="2">ನನ್ನ ದೇವರಾದ ಯೆಹೋವ ದೇವರೇ, ಸಹಾಯಕ್ಕಾಗಿ ನಿಮಗೆ ಮೊರೆಯಿಡಲು, ನನ್ನನ್ನು ಸ್ವಸ್ಥಮಾಡಿದ್ದೀರಿ.</verse>
				<verse number="3">ಯೆಹೋವ ದೇವರೇ, ನನ್ನ ಪ್ರಾಣವನ್ನು ಪಾತಾಳದೊಳಗಿಂದ ಎತ್ತಿದ್ದೀರಿ; ನಾನು ಸಮಾಧಿ ಸೇರದ ಹಾಗೆ ನನ್ನನ್ನು ಬದುಕಿಸಿದ್ದೀರಿ.</verse>
				<verse number="4">ಯೆಹೋವ ದೇವರ ವಿಶ್ವಾಸಿಗಳೇ ಅವರನ್ನು ಕೊಂಡಾಡಿರಿ; ಅವರ ಪರಿಶುದ್ಧ ನಾಮವನ್ನು ಕೊಂಡಾಡಿರಿ.</verse>
				<verse number="5">ಅವರ ಕೋಪವು ಕ್ಷಣಮಾತ್ರವೇ; ಆದರೆ ಅವರ ದಯೆಯು ಜೀವಮಾನವೆಲ್ಲಾ ಇರುತ್ತದೆ; ರಾತ್ರಿಯಲ್ಲಿ ದುಃಖ ಬಂದಿದ್ದರೂ; ಬೆಳಿಗ್ಗೆ ಆನಂದವು ಬರುವುದು.</verse>
				<verse number="6">ನಾನು ಸುರಕ್ಷಿತನಾಗಿದ್ದಾಗ, “ನಾನೆಂದೂ ಕದಲುವುದಿಲ್ಲ,” ಎಂದು ಹೇಳಿಕೊಂಡೆನು.</verse>
				<verse number="7">ಯೆಹೋವ ದೇವರೇ, ನಿಮ್ಮ ದಯೆಯಿಂದ ನನ್ನ ರಾಜ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀರಿ ಆದರೆ ನೀವು ನಿಮ್ಮ ಮುಖವನ್ನು ಮರೆಮಾಡಲು ನಾನು ಕಳವಳಗೊಂಡೆನು.</verse>
				<verse number="8">ಯೆಹೋವ ದೇವರೇ, ನಾನು ನಿಮಗೆ ಮೊರೆಯಿಟ್ಟೆನು; ಕರುಣೆಗಾಗಿ ಯೆಹೋವ ಕರ್ತ ಆಗಿರುವವರಿಗೆ ಬಿನ್ನವಿಸಿದೆನು.</verse>
				<verse number="9">ನಾನು ಸಮಾಧಿಯಲ್ಲಿ ಇಳಿದು ಹೋಗಿ ನಾಶವಾದರೆ, ಅದರಿಂದ ನಿಮಗೆ ಆಗುವ ಲಾಭವೇನು? ಧೂಳು ನಿಮ್ಮನ್ನು ಸ್ತುತಿಸುವುದೋ? ಅದು ನಿಮ್ಮ ನಂಬಿಗಸ್ತಿಕೆಯನ್ನು ಪ್ರಕಟಿಸುವುದೋ?</verse>
				<verse number="10">ಯೆಹೋವ ದೇವರೇ, ಲಾಲಿಸು; ನನ್ನನ್ನು ಕರುಣಿಸಿರಿ; ಯೆಹೋವ ದೇವರೇ, ನನಗೆ ಸಹಾಯಕರಾಗಿರಿ.</verse>
				<verse number="11">ನೀವು ನನ್ನ ಗೋಳಾಟವನ್ನು ಕುಣಿದಾಟಕ್ಕೆ ತಿರುಗಿಸಿದ್ದೀರಿ; ನೀವು ನನ್ನ ಗೋಣಿತಟ್ಟನ್ನು ತೆಗೆದುಹಾಕಿ ಹರ್ಷವಸ್ತ್ರವನ್ನು ನನಗೆ ಧರಿಸಿದ್ದೀರಿ.</verse>
				<verse number="12">ಆದ್ದರಿಂದ ನನ್ನ ಹೃದಯವು ಮೌನವಿರದೆ ನಿಮ್ಮನ್ನು ಯುಗಯುಗಕ್ಕೂ ಕೊಂಡಾಡುತ್ತಿರುವುದು. ನನ್ನ ದೇವರಾದ ಯೆಹೋವ ದೇವರೇ, ನಾನು ನಿಮ್ಮನ್ನು ಸದಾಕಾಲವೂ ಸ್ತುತಿಸುವೆನು.</verse>
			</chapter>
			<chapter number="31">
				<verse number="1">ಯೆಹೋವ ದೇವರೇ, ನಿಮ್ಮನ್ನೇ ಆಶ್ರಯಿಸಿಕೊಂಡಿದ್ದೇನೆ; ನಾನು ಎಂದಿಗೂ ನಾಚಿಕೆಪಡದಂತೆ ಮಾಡಿರಿ; ನಿಮ್ಮ ನೀತಿಯಲ್ಲಿ ನನ್ನನ್ನು ವಿಮೋಚಿಸಿರಿ.</verse>
				<verse number="2">ನಿಮ್ಮ ಕಿವಿಯನ್ನು ನನ್ನ ಕಡೆಗೆ ತಿರುಗಿಸಿರಿ; ಬೇಗ ಬಂದು ನನ್ನನ್ನು ಬಿಡಿಸಿರಿ; ನನ್ನನ್ನು ರಕ್ಷಿಸುವುದಕ್ಕೆ ನನ್ನ ಆಶ್ರಯದ ಬಂಡೆಯೂ, ಬಲವಾದ ಕೋಟೆಯೂ ಆಗಿರಿ.</verse>
				<verse number="3">ನನ್ನ ಬಂಡೆಯೂ ನನ್ನ ಕೋಟೆಯೂ ನೀವೇ; ನಿಮ್ಮ ಹೆಸರಿನ ನಿಮಿತ್ತ ನನ್ನನ್ನು ನಡೆಸಿರಿ; ನನಗೆ ಮಾರ್ಗದರ್ಶಕರಾಗಿರಿ.</verse>
				<verse number="4">ವೈರಿಯು ಗುಪ್ತವಾಗಿ ಒಡ್ಡಿದ ಬಲೆಯೊಳಗಿಂದ ನನ್ನನ್ನು ಹೊರಗೆ ಎಳೆಯಿರಿ; ನೀವೇ ನನಗೆ ಆಶ್ರಯ.</verse>
				<verse number="5">ನಿಮ್ಮ ಕೈಗೆ ನನ್ನ ಆತ್ಮವನ್ನು ಒಪ್ಪಿಸಿದ್ದೇನೆ; ನಂಬಿಗಸ್ತದ ದೇವರಾದ ನನ್ನ ಯೆಹೋವ ದೇವರೇ, ನೀವು ನನ್ನನ್ನು ವಿಮೋಚಿಸಿದ್ದೀರಿ.</verse>
				<verse number="6">ದೇವರಲ್ಲದವುಗಳನ್ನು ಅನುಸರಿಸುವವರಿಂದ ನಾನು ಪ್ರತ್ಯೇಕವಾಗಿದ್ದೇನೆ; ನಾನು ಯೆಹೋವ ದೇವರಲ್ಲಿಯೇ ಭರವಸೆ ಇಟ್ಟಿದ್ದೇನೆ.</verse>
				<verse number="7">ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಉಲ್ಲಾಸಿಸಿ ಸಂತೋಷ ಪಡುವೆನು; ಏಕೆಂದರೆ ನೀವು ನನ್ನ ಕಷ್ಟಗಳನ್ನು ಲಕ್ಷ್ಯಕ್ಕೆ ತಂದು, ನನ್ನ ಪ್ರಾಣದ ಸಂಕಟಗಳನ್ನು ಅರಿತಿದ್ದೀರಿ.</verse>
				<verse number="8">ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿ ಬಿಡಲಿಲ್ಲ; ನನ್ನ ಪಾದಗಳನ್ನು ವಿಶಾಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀರಿ.</verse>
				<verse number="9">ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಇಕ್ಕಟ್ಟಿನಲ್ಲಿದ್ದೇನೆ; ನನ್ನ ಕಣ್ಣೂ ನನ್ನ ಪ್ರಾಣವೂ ನನ್ನ ದೇಹವೂ ದುಃಖದಿಂದ ಕ್ಷೀಣವಾಗಿವೆ.</verse>
				<verse number="10">ನನ್ನ ಜೀವವು ಚಿಂತೆಯಿಂದಲೂ, ನನ್ನ ವರ್ಷಗಳು ನಿಟ್ಟುಸಿರಿನಿಂದಲೂ ಕಳೆದುಹೋಗಿವೆ; ನನ್ನ ಅಪರಾಧದಿಂದ ನನ್ನ ಶಕ್ತಿಯು ಕುಂದಿಹೋಗಿದೆ; ನನ್ನ ಎಲುಬುಗಳು ಕ್ಷೀಣವಾಗಿವೆ.</verse>
				<verse number="11">ನನ್ನ ವೈರಿಗಳೆಲ್ಲರ ನಿಮಿತ್ತವಾಗಿ ನನ್ನ ನೆರೆಯವರಿಗೆ ನಾನು ನಿಂದೆಯೂ, ಮಿತ್ರರಿಗೆ ಹೆದರಿಕೆಯೂ ಆಗಿದ್ದೇನೆ; ದಾರಿಯಲ್ಲಿ ನನ್ನನ್ನು ಕಂಡವರು ನನ್ನನ್ನು ಬಿಟ್ಟು ಓಡಿಹೋಗುತ್ತಾರೆ.</verse>
				<verse number="12">ನಾನು ಸತ್ತುಹೋದವರಂತೆ ಎಲ್ಲರು ನನ್ನನ್ನು ಮರೆತುಬಿಟ್ಟಿದ್ದಾರೆ; ನಾನು ಒಡೆದ ಮಡಕೆಯಂತೆ ಇದ್ದೇನೆ.</verse>
				<verse number="13">ಅನೇಕರು ಹೀಗೆ ಪಿಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತಲೂ ಅಂಜಿಕೆ ಇದೆ; ಅನೇಕರು ನನ್ನ ಪ್ರಾಣವನ್ನು ತೆಗೆಯಬೇಕೆಂದು ಒಳಸಂಚು ಮಾಡುತ್ತಿದ್ದಾರೆ.</verse>
				<verse number="14">ಯೆಹೋವ ದೇವರೇ, ನಾನು ನಿಮ್ಮಲ್ಲಿ ಭರವಸೆ ಇಟ್ಟಿದ್ದೇನೆ; “ನನ್ನ ದೇವರು ನೀವೇ,” ಎಂದು ಹೇಳಿಕೊಂಡಿದ್ದೇನೆ.</verse>
				<verse number="15">ನನ್ನ ಸಮಯವು ನಿಮ್ಮ ಕೈಯಲ್ಲಿ ಇವೆ; ನನ್ನ ಶತ್ರುಗಳ ಕೈಯಿಂದಲೂ ಹಿಂಸೆಪಡಿಸುವವರಿಂದಲೂ ನನ್ನನ್ನು ಬಿಡಿಸಿರಿ.</verse>
				<verse number="16">ನಿಮ್ಮ ಮುಖವು ನಿಮ್ಮ ಸೇವಕನ ಮೇಲೆ ಪ್ರಕಾಶಿಸಲಿ; ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನನ್ನನ್ನು ರಕ್ಷಿಸಿರಿ.</verse>
				<verse number="17">ಯೆಹೋವ ದೇವರೇ, ನಾನು ನಾಚಿಕೆಪಡದಂತೆ ಮಾಡಿರಿ; ನಾನು ನಿಮಗೆ ಮೊರೆಯಿಟ್ಟಿದ್ದೇನೆ; ದುಷ್ಟರು ನಾಚಿಕೆಪಡಲಿ; ಅವರು ಸಮಾಧಿ ಸೇರಲಿ.</verse>
				<verse number="18">ನೀತಿವಂತರ ಮೇಲೆ ಗರ್ವದಿಂದಲೂ ತಿರಸ್ಕಾರದಿಂದಲೂ, ಕಠಿಣವಾಗಿಯೂ ಮಾತನಾಡುವ ಸುಳ್ಳಿನ ತುಟಿಗಳು ಮೌನವಾಗಲಿ.</verse>
				<verse number="19">ನಿಮ್ಮ ಒಳ್ಳೆಯತನವು ಎಷ್ಟೋ ಸಮೃದ್ಧ; ನೀವು ನಿಮಗೆ ಭಯಪಡುವವರಿಗೋಸ್ಕರ ಆ ಒಳ್ಳೆಯತನವನ್ನಿಟ್ಟಿದ್ದೀರಿ, ನಿಮ್ಮನ್ನು ಆಶ್ರಯಿಸಿಕೊಳ್ಳುವವರಿಗೆ ನೀವು ನಿಮ್ಮ ಒಳ್ಳೆಯತನವನ್ನು ಎಲ್ಲರ ಮುಂದೆ ದಯಪಾಲಿಸಿದ್ದೀರಿ.</verse>
				<verse number="20">ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ನೀವು ಅವರನ್ನು ನಿಮ್ಮ ಸಾನಿಧ್ಯದಲ್ಲಿಯೇ ಮರೆಮಾಡುತ್ತೀರಿ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ನಿಮ್ಮ ನಿವಾಸದಲ್ಲಿ ಅಡಗಿಸುತ್ತೀರಿ.</verse>
				<verse number="21">ಯೆಹೋವ ದೇವರಿಗೆ ಸ್ತುತಿಯುಂಟಾಗಲಿ; ಮುತ್ತಿಗೆ ಹಾಕಲಾದ ನಗರದಲ್ಲಿದ್ದ ನನಗೆ ದೇವರು ಆಶ್ಚರ್ಯಕರವಾದ ಒಡಂಬಡಿಕೆಯ ಪ್ರೀತಿಯನ್ನು ತೋರಿಸಿದ್ದಾರೆ.</verse>
				<verse number="22">“ನಾನು ನಿಮ್ಮ ಕಣ್ಣುಗಳ ಎದುರಿನಿಂದ ತೆಗೆದು ಹಾಕಲಾಗಿದ್ದೇನೆ” ಎಂದು ನನ್ನ ಗಾಬರಿಯಲ್ಲಿ ಹೇಳಿದೆನು; ಆದರೂ ನಾನು ಸಹಾಯಕ್ಕಾಗಿ ನಿಮಗೆ ಮೊರೆಯಿಡಲು ನೀವು ಕರುಣೆಗಾಗಿ ಕೂಗಿದ್ದನ್ನು ಕೇಳಿದ್ದೀರಿ.</verse>
				<verse number="23">ಭಕ್ತರೇ, ಯೆಹೋವ ದೇವರನ್ನು ಪ್ರೀತಿಸಿರಿ; ಯೆಹೋವ ದೇವರು ನಂಬಿಗಸ್ತರನ್ನು ಕಾಯುತ್ತಾರೆ; ಅಹಂಕಾರಿಗೆ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ.</verse>
				<verse number="24">ಯೆಹೋವ ದೇವರಲ್ಲಿ ನಿರೀಕ್ಷಿಸುವವರೆಲ್ಲರೂ ದೃಢವಾಗಿರಿ; ನಿಮ್ಮ ಹೃದಯವು ಧೈರ್ಯದಿಂದ ಇರಲಿ.</verse>
			</chapter>
			<chapter number="32">
				<verse number="1">ಯಾರ ಉಲ್ಲಂಘನೆಗಳು ಕ್ಷಮಿಸಲಾಗಿವೆಯೋ, ಯಾರ ಪಾಪಗಳು ಮುಚ್ಚಲಾಗಿವೆಯೋ ಅವರೇ ಧನ್ಯರು.</verse>
				<verse number="2">ಯೆಹೋವ ದೇವರು ಯಾರ ಅನ್ಯಾಯವನ್ನು ಎಣಿಸುವುದಿಲ್ಲವೋ, ಯಾರ ಆತ್ಮದಲ್ಲಿ ವಂಚನೆ ಇರುವುದಿಲ್ಲವೋ ಆ ಮನುಷ್ಯನು ಧನ್ಯನು.</verse>
				<verse number="3">ನಾನು ನನ್ನ ಪಾಪವನ್ನು ಅರಿಕೆ ಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದು ಹೋದವು.</verse>
				<verse number="4">ದೇವರೇ, ರಾತ್ರಿ ಹಗಲು ನಿಮ್ಮ ಕೈ ನನ್ನ ಮೇಲೆ ಭಾರವಾಗಿತ್ತು; ನನ್ನ ಬಲವು ಬೇಸಿಗೆಯ ಬಿಸಿಲಿನಲ್ಲಿ ಕುಂದಿಹೋಗುವಂತೆ ಆಯಿತು.</verse>
				<verse number="5">ನನ್ನ ಪಾಪವನ್ನು ನಿಮಗೆ ತಿಳಿಸಿ, ನನ್ನ ಅನ್ಯಾಯವನ್ನು ಮರೆಮಾಡದೆ, “ನನ್ನ ಉಲ್ಲಂಘನೆಗಳನ್ನು ಯೆಹೋವ ದೇವರಿಗೆ ಅರಿಕೆ ಮಾಡುವೆನು,” ಎಂದು ಹೇಳಿದೆನು; ಆಗ, ನೀವು ನನ್ನ ಪಾಪದ ಅಪರಾಧವನ್ನು ಪರಿಹರಿಸಿದಿರಿ.</verse>
				<verse number="6">ಆದುದರಿಂದ ಭಕ್ತರೆಲ್ಲರು ನೀವು ಸಿಕ್ಕುವ ಕಾಲದಲ್ಲಿ ನಿಮಗೆ ಪ್ರಾರ್ಥನೆ ಮಾಡಲಿ; ನಿಶ್ಚಯವಾಗಿ ನೀರಿನ ಮಹಾಪ್ರವಾಹಗಳು ಅವರ ಸಮೀಪಕ್ಕೆ ಬರುವುದಿಲ್ಲ.</verse>
				<verse number="7">ನೀವು ನನಗೆ ಮರೆಮಾಡುವ ಸ್ಥಳವಾಗಿರುವಿರಿ; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀರಿ; ವಿಮೋಚನಾ ಧ್ವನಿಗಳಿಂದ ನೀವು ನನ್ನನ್ನು ಸುತ್ತುವರಿಯುತ್ತೀರಿ.</verse>
				<verse number="8">ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿನಗೆ ಬುದ್ಧಿ ಹೇಳಿ, ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಮೆಚ್ಚುಗೆಯಿಂದ ನಿನ್ನನ್ನು ನಡೆಸುವೆನು.</verse>
				<verse number="9">ವಿವೇಕವಿಲ್ಲದ ಕುದುರೆಯ ಹಾಗೆಯೂ, ಹೇಸರಗತ್ತೆಯ ಹಾಗೆಯೂ ಇರಬೇಡಿರಿ; ಬಾರಿನಿಂದಲೂ, ಕಡಿವಾಣದಿಂದಲೂ ಅವುಗಳನ್ನು ನಿಯಂತ್ರಿಸಬೇಕು, ಇಲ್ಲದಿದ್ದರೆ ಅವು ನಿಮ್ಮ ಅಧೀನಕ್ಕೆ ಬರುವುದಿಲ್ಲ.</verse>
				<verse number="10">ದುಷ್ಟರಿಗೆ ವ್ಯಥೆಗಳು ಬಹಳ; ಆದರೆ ಯೆಹೋವ ದೇವರಲ್ಲಿ ಭರವಸವಿಡುವವನನ್ನು ಅದರ ಒಂಡಬಡಿಕೆಯ ಪ್ರೀತಿಯು ಸುತ್ತುವರಿಯುವುದು.</verse>
				<verse number="11">ನೀತಿವಂತರೇ, ಯೆಹೋವ ದೇವರಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯ ಉಳ್ಳವರೇ, ಜಯಗೀತೆ ಹಾಡಿರಿ.</verse>
			</chapter>
			<chapter number="33">
				<verse number="1">ನೀತಿವಂತರೇ, ಯೆಹೋವ ದೇವರಿಗಾಗಿ ಸಂತೋಷದಿಂದ ಹಾಡಿರಿ; ಯಥಾರ್ಥರು ಅವರನ್ನು ಕೊಂಡಾಡುವುದು ಯೋಗ್ಯವಾಗಿದೆ.</verse>
				<verse number="2">ಯೆಹೋವ ದೇವರನ್ನು ಕಿನ್ನರಿಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಅವರನ್ನು ಕೀರ್ತಿಸಿರಿ.</verse>
				<verse number="3">ದೇವರಿಗೆ ಹೊಸಹಾಡನ್ನು ಹಾಡಿರಿ. ದೊಡ್ಡ ಶಬ್ದದಿಂದ ಇಂಪಾಗಿ ಹಾಡಿರಿ.</verse>
				<verse number="4">ಏಕೆಂದರೆ ಯೆಹೋವ ದೇವರ ವಾಕ್ಯವು ಯಥಾರ್ಥವೂ ಸತ್ಯವೂ ಆಗಿರುತ್ತವೆ. ಅವರ ಮಾಡುವ ಎಲ್ಲಾ ಕೆಲಸಗಳಲ್ಲಿಯೂ ನಂಬಿಗಸ್ತರಾಗಿರುತ್ತಾರೆ.</verse>
				<verse number="5">ಅವರು ನೀತಿಯನ್ನೂ, ನ್ಯಾಯವನ್ನೂ ಪ್ರೀತಿಸುತ್ತಾರೆ; ಭೂಲೋಕವೆಲ್ಲಾ ಯೆಹೋವ ದೇವರ ಒಡಂಬಡಿಕೆಯ ಪ್ರೀತಿಯಿಂದ ತುಂಬಿದೆ.</verse>
				<verse number="6">ಯೆಹೋವ ದೇವರ ವಾಕ್ಯದಿಂದ ಆಕಾಶವೂ, ಅವರ ಬಾಯಿಯ ಉಸಿರಿನಿಂದ ನಕ್ಷತ್ರ ಮಂಡಲವೂ ಉಂಟಾದವು.</verse>
				<verse number="7">ಅವರು ಸಮುದ್ರದ ನೀರನ್ನು ಒಟ್ಟುಗೂಡಿಸುತ್ತಾರೆ; ಅವರು ಅಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾರೆ.</verse>
				<verse number="8">ಭೂಲೋಕವೆಲ್ಲಾ ಯೆಹೋವ ದೇವರಿಗೆ ಭಯಪಡಲಿ; ಭೂಲೋಕ ನಿವಾಸಿಗಳೆಲ್ಲರೂ ಅವರಿಗೆ ಭಯಭಕ್ತಿಯಿಂದಿರಲಿ.</verse>
				<verse number="9">ಏಕೆಂದರೆ ಅವರು ಹೇಳಿದ ಮಾತ್ರಕ್ಕೆ ಸಮಸ್ತವೂ ಸೃಷ್ಟಿಯಾಯಿತು; ಅವರು ಆಜ್ಞಾಪಿಸಲು ಭೂಲೋಕವು ಸ್ಥಿರವಾಯಿತು.</verse>
				<verse number="10">ಯೆಹೋವ ದೇವರು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವರು; ಜನರ ದುರುದ್ದೇಶಗಳನ್ನು ನಿಷ್ಪಲ ಮಾಡುತ್ತಾರೆ.</verse>
				<verse number="11">ಆದರೆ ಯೆಹೋವ ದೇವರ ಆಲೋಚನೆಗಳು ಎಂದೆಂದಿಗೂ ಅವರ ಹೃದಯದ ಉದ್ದೇಶಗಳು ತಲತಲಾಂತರಕ್ಕೂ ನಿಲ್ಲುತ್ತವೆ.</verse>
				<verse number="12">ಯೆಹೋವ ದೇವರು ಯಾರ ದೇವರಾಗಿದ್ದಾರೋ, ಅಂಥ ಭಾಗ್ಯವಂತರು. ದೇವರು ತಮಗಾಗಿ ಆಯ್ದುಕೊಂಡ ಜನರೂ ಭಾಗ್ಯವಂತರು.</verse>
				<verse number="13">ಪರಲೋಕದಿಂದ ಯೆಹೋವ ದೇವರು ದೃಷ್ಟಿಸಿ, ಮಾನವರೆಲ್ಲರನ್ನೂ ನೋಡುತ್ತಾರೆ.</verse>
				<verse number="14">ತಮ್ಮ ನಿವಾಸ ಸ್ಥಳದಿಂದ ಭೂನಿವಾಸಿಗಳೆಲ್ಲರ ಮೇಲೆ ಕಣ್ಣಿಡುತ್ತಾರೆ.</verse>
				<verse number="15">ಎಲ್ಲರ ಹೃದಯಗಳನ್ನು ರೂಪಿಸುವವರು ದೇವರೇ, ಜನರು ಮಾಡುವ ಕೆಲಸಗಳನ್ನೆಲ್ಲಾ ಗಮನಿಸುವವರೂ ಅವರೇ.</verse>
				<verse number="16">ಅಧಿಕ ಸೈನ್ಯದಿಂದ ಅರಸನು ಜಯಹೊಂದುವುದಿಲ್ಲ; ಪರಾಕ್ರಮಶಾಲಿಯು ಅಧಿಕ ಶಕ್ತಿಯಿಂದ ಬಿಡುಗಡೆಯಾಗುವುದಿಲ್ಲ.</verse>
				<verse number="17">ಬಿಡುಗಡೆಗೆ ಕುದುರೆಯ ಬಲ ವ್ಯರ್ಥವಾಗಿದೆ; ಅದಕ್ಕೆ ಮಹಾಶಕ್ತಿ ಇದ್ದರೂ ಅದು ರಕ್ಷಿಸಲಾರದು.</verse>
				<verse number="18">ಯೆಹೋವ ದೇವರ ಕಣ್ಣು ತಮಗೆ ಭಯಪಡುವವರ ಮೇಲಿರುತ್ತದೆ, ಅವರ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರ ಮೇಲೆಯೂ ಇರುತ್ತೆ.</verse>
				<verse number="19">ಇದರಿಂದ ದೇವರು ಅವರ ಪ್ರಾಣವನ್ನು ಮರಣದಿಂದ ಬಿಡಿಸಿ, ಬರಗಾಲದಲ್ಲಿ ಅವರ ಜೀವವನ್ನು ಕಾಪಾಡುತ್ತಾರೆ.</verse>
				<verse number="20">ನಮ್ಮ ಪ್ರಾಣವು ಯೆಹೋವ ದೇವರಿಗಾಗಿ ಕಾದಿದೆ; ನಮ್ಮ ಸಹಾಯವೂ ನಮ್ಮ ಗುರಾಣಿಯೂ ಅವರೇ.</verse>
				<verse number="21">ದೇವರಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ; ನಾವು ಅವರ ಪರಿಶುದ್ಧ ಹೆಸರಿನಲ್ಲಿ ಭರವಸೆ ಇಟ್ಟಿದ್ದೇವೆ.</verse>
				<verse number="22">ನಾವು ನಿಮ್ಮನ್ನು ನಿರೀಕ್ಷಿಸುವ ಪ್ರಕಾರ, ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ನಮ್ಮ ಮೇಲೆ ಇರಲಿ.</verse>
			</chapter>
			<chapter number="34">
				<verse number="1">ನಾನು ಎಲ್ಲಾ ಕಾಲಗಳಲ್ಲಿ ಯೆಹೋವ ದೇವರನ್ನು ಸ್ತುತಿಸುವೆನು; ಅವರ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.</verse>
				<verse number="2">ಯೆಹೋವ ದೇವರಲ್ಲಿ ನನ್ನ ಪ್ರಾಣವು ಹಿಗ್ಗುವುದು; ಇದನ್ನು ದೀನರು ಕೇಳಿ ಸಂತೋಷಪಡುವರು.</verse>
				<verse number="3">ನನ್ನ ಸಂಗಡ ಯೆಹೋವ ದೇವರನ್ನು ಮಹಿಮೆಪಡಿಸಿರಿ; ನಾವು ಒಟ್ಟಾಗಿ ಅವರ ಹೆಸರನ್ನು ಘನಪಡಿಸೋಣ.</verse>
				<verse number="4">ನಾನು ಯೆಹೋವ ದೇವರನ್ನು ಹುಡುಕಿದೆನು; ಆಗ ಅವರು ನನಗೆ ಉತ್ತರಕೊಟ್ಟು, ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದರು.</verse>
				<verse number="5">ದೇವರನ್ನು ದೃಷ್ಟಿಸಿದವರು ಪ್ರಕಾಶ ಹೊಂದಿದರು; ಅಂಥವರ ಮುಖಗಳು ನಾಚಿಕೆಯಿಂದ ಕುಂದಿಹೋಗುವುದಿಲ್ಲ.</verse>
				<verse number="6">ಬಡವನಾದ ನಾನು ಕರೆಯಲು ಯೆಹೋವ ದೇವರು ಕೇಳಿ ನನ್ನ ಎಲ್ಲಾ ಇಕ್ಕಟ್ಟುಗಳೊಳಗಿಂದ ನನ್ನನ್ನು ರಕ್ಷಿಸಿದರು.</verse>
				<verse number="7">ದೇವರಿಗೆ ಭಯಪಡುವವರ ಸುತ್ತಲೂ ಯೆಹೋವ ದೇವರ ದೂತನು ಇಳಿದುಕೊಂಡು ಅವರನ್ನು ಕಾಪಾಡುತ್ತಾನೆ.</verse>
				<verse number="8">ಯೆಹೋವ ದೇವರು ಒಳ್ಳೆಯವರೆಂದು ರುಚಿಸಿ ನೋಡಿರಿ; ಅವರನ್ನು ಆಶ್ರಯಿಸುವ ಮನುಷ್ಯನು ಭಾಗ್ಯವಂತನು.</verse>
				<verse number="9">ದೇವರ ಭಕ್ತರೇ, ನೀವು ಯೆಹೋವ ದೇವರಿಗೆ ಭಯಪಡಿರಿ; ಏಕೆಂದರೆ ದೇವಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇಲ್ಲ.</verse>
				<verse number="10">ಸಿಂಹಗಳು ಹಸಿದು ಬಳಲಬಹುದು, ಆದರೆ ಯೆಹೋವ ದೇವರನ್ನು ಹುಡುಕುವವರಿಗೆ ಯಾವ ಒಳ್ಳೆಯದರ ಕೊರತೆಯೂ ಇರುವುದಿಲ್ಲ.</verse>
				<verse number="11">ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಯೆಹೋವ ದೇವರ ಬಗ್ಗೆ ಭಯವನ್ನು ನಿಮಗೆ ಕಲಿಸುವೆನು.</verse>
				<verse number="12">ನಿಮ್ಮಲ್ಲಿ ಜೀವನವನ್ನು ಪ್ರೀತಿಸುವವನು ಮತ್ತು ಬಹಳ ದಿನಗಳವರೆಗೆ ಬದುಕಬೇಕೆ?</verse>
				<verse number="13">ನೀನು ಕೇಡಿನಿಂದ ನಿನ್ನ ನಾಲಿಗೆಯನ್ನು, ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ನಿಯಂತ್ರಿಸಿಕೋ.</verse>
				<verse number="14">ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.</verse>
				<verse number="15">ನೀತಿವಂತರ ಮೇಲೆ ಯೆಹೋವ ದೇವರು ದೃಷ್ಟಿ ಇಡುತ್ತಾರೆ, ಅವರು ಮೊರೆಯಿಡುವಾಗ ದೇವರು ಕಿವಿಗೊಡುತ್ತಾರೆ.</verse>
				<verse number="16">ಆದರೆ ಕೆಟ್ಟದ್ದನ್ನು ಮಾಡುವವರಿಗೆ ಯೆಹೋವ ದೇವರು ವಿಮುಖರಾಗಿದ್ದಾರೆ, ಅಂಥವರ ಹೆಸರನ್ನು ಭೂಮಿಯೊಳಗಿಂದ ತೆಗೆದುಹಾಕುವರು.</verse>
				<verse number="17">ನೀತಿವಂತರ ಕೂಗನ್ನು ಯೆಹೋವ ದೇವರು ಕೇಳಿ, ಅವರನ್ನು ಎಲ್ಲಾ ಇಕ್ಕಟ್ಟುಗಳೊಳಗಿಂದ ಬಿಡಿಸುತ್ತಾರೆ.</verse>
				<verse number="18">ಮುರಿದ ಹೃದಯದವರಿಗೆ ಯೆಹೋವ ದೇವರು ಸಮೀಪವಾಗಿದ್ದಾರೆ; ಜಜ್ಜಿದ ಆತ್ಮವುಳ್ಳವರನ್ನು ರಕ್ಷಿಸುತ್ತಾರೆ.</verse>
				<verse number="19">ನೀತಿವಂತನಿಗೆ ತೊಂದರೆಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಯೆಹೋವ ದೇವರು ಅವನನ್ನು ಬಿಡಿಸುತ್ತಾರೆ.</verse>
				<verse number="20">ಅವರು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾರೆ; ಅವುಗಳಲ್ಲಿ ಒಂದಾದರೂ ಮುರಿದು ಹೋಗುವುದಿಲ್ಲ.</verse>
				<verse number="21">ಕೇಡು ದುಷ್ಟನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಶಿಕ್ಷೆಗೆ ಒಳಗಾಗುವರು.</verse>
				<verse number="22">ಯೆಹೋವ ದೇವರು ತಮ್ಮ ಸೇವಕರ ಪ್ರಾಣವನ್ನು ವಿಮೋಚಿಸುತ್ತಾರೆ; ದೇವರನ್ನು ಆಶ್ರಯಿಸುವವರು ಯಾರೂ ಶಿಕ್ಷೆಗೆ ಒಳಗಾಗುವುದಿಲ್ಲ.</verse>
			</chapter>
			<chapter number="35">
				<verse number="1">ಯೆಹೋವ ದೇವರೇ, ನನ್ನ ಸಂಗಡ ವ್ಯಾಜ್ಯ ಮಾಡುವವರ ಸಂಗಡ ವ್ಯಾಜ್ಯ ಮಾಡಿರಿ; ನನಗೆ ವಿರೋಧವಾಗಿ ಯುದ್ಧ ಮಾಡುವವರ ಸಂಗಡ ಯುದ್ಧಮಾಡಿರಿ.</verse>
				<verse number="2">ಗುರಾಣಿಯನ್ನೂ ಖಡ್ಗವನ್ನೂ ಹಿಡಿದುಕೊಂಡು ನನ್ನ ಸಹಾಯಕ್ಕೆ ಎದ್ದು ಬನ್ನಿರಿ.</verse>
				<verse number="3">ಬರ್ಜಿಯನ್ನೂ ಭಲ್ಲೆಯನ್ನೂ ಹಿಡಿದು ನನ್ನನ್ನು ಹಿಂಸಿಸುವವರಿಗೆ ಎದುರಾಗಿ ಅಡ್ಡಗಟ್ಟಿರಿ. “ನಾನೇ ನಿಮ್ಮ ರಕ್ಷಣೆ” ಎಂದು ನನಗೆ ಹೇಳಿರಿ.</verse>
				<verse number="4">ನನ್ನ ಪ್ರಾಣವನ್ನು ಹುಡುಕುವವರು ನಾಚಿಕೆಪಟ್ಟು ಅವಮಾನ ಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಹಿಂದಿರುಗಿ ಲಜ್ಜೆಪಡಲಿ.</verse>
				<verse number="5">ಅವರು ಗಾಳಿಗೆ ಹಾರುವ ಹೊಟ್ಟಿನ ಹಾಗೆ ಆಗಲಿ; ಯೆಹೋವ ದೇವರ ದೂತನು ಅವರನ್ನು ಹಿಂದಟ್ಟಲಿ.</verse>
				<verse number="6">ಅಂಥವರ ಮಾರ್ಗವು ಕತ್ತಲೆಯೂ ಜಾರುವಿಕೆಯೂ ಆಗಿರಲಿ; ಯೆಹೋವ ದೇವರ ದೂತನು ಅವರನ್ನು ಹಿಂದಟ್ಟಲಿ.</verse>
				<verse number="7">ಏಕೆಂದರೆ ಕಾರಣವಿಲ್ಲದೆ ತಮ್ಮ ಬಲೆಯನ್ನು ನನಗೆ ಒಡ್ಡಿದ್ದಾರೆ; ಕಾರಣವಿಲ್ಲದೆ ನನಗೆ ಗುಂಡಿಯನ್ನು ಅಗೆದಿದ್ದಾರೆ.</verse>
				<verse number="8">ನಾಶವು ಅವರಿಗೆ ಅನಿರೀಕ್ಷಿತವಾಗಿ ಬರಲಿ; ಅವರು ಅಡಗಿಸಿಟ್ಟ ಬಲೆಯು ಅವರನ್ನೇ ಹಿಡಿಯಲಿ; ವಿನಾಶನಕ್ಕಾಗಿ ಅವರು ಗುಂಡಿಯಲ್ಲಿ ಬೀಳಲಿ.</verse>
				<verse number="9">ಆಗ ನನ್ನ ಪ್ರಾಣವು ಯೆಹೋವ ದೇವರಲ್ಲಿ ಉಲ್ಲಾಸಗೊಂಡು, ದೇವರ ರಕ್ಷಣೆಯಲ್ಲಿ ಸಂತೋಷಿಸುವುದು.</verse>
				<verse number="10">ಯೆಹೋವ ದೇವರೇ, “ನಿಮ್ಮ ಹಾಗೆ ಯಾರು ಇದ್ದಾರೆ? ಬಡವನನ್ನು ಅವನಿಗಿಂತ ಬಲಿಷ್ಠನಿಂದ ಕಾಪಾಡುತ್ತೀರಿ ದರಿದ್ರನನ್ನೂ, ಕೊರತೆಯುಳ್ಳವನನ್ನೂ ಸುಲಿದುಕೊಳ್ಳುವವನಿಂದ ಬಿಡಿಸುತ್ತೀರಿ,” ಎಂದು ನನ್ನ ಪೂರ್ಣ ಪ್ರಾಣವೇ ಹೇಳುವುದು.</verse>
				<verse number="11">ಸುಳ್ಳುಸಾಕ್ಷಿಗಳು ನನಗೆ ಎದುರಾಗಿ ಎದ್ದು, ನಾನು ತಿಳಿಯದವುಗಳ ಬಗ್ಗೆ ಪ್ರಶ್ನೆ ಮಾಡುತ್ತಾರೆ.</verse>
				<verse number="12">ನನ್ನ ಉಪಕಾರಕ್ಕೆ ಬದಲಾಗಿ ನನಗೆ ಕೇಡನ್ನು ಮಾಡಿ ನನ್ನನ್ನು ದುಃಖದಲ್ಲಿರುವವರಂತೆ ಬಿಟ್ಟುಬಿಟ್ಟಿದ್ದರೆ</verse>
				<verse number="13">ನಾನಾದರೋ ಅವರು ಅಸ್ವಸ್ಥರಾದಾಗ ಗೋಣಿತಟ್ಟು ಹೊದ್ದುಕೊಂಡು ಉಪವಾಸದಿಂದ ತಗ್ಗಿಸಿಕೊಂಡೆನು; ನನ್ನ ಪ್ರಾರ್ಥನೆಗಳಿಗೆ ಉತ್ತರ ದೊರೆಯಲಿಲ್ಲ.</verse>
				<verse number="14">ಆದುದರಿಂದ ಸ್ವಸ್ಥರಾದವನು ನನಗೆ ಸ್ನೇಹಿತನೂ ಇಲ್ಲವೆ ಸಹೋದರನೂ ಎಂದು ಭಾವಿಸಿಕೊಂಡು, ನನ್ನ ತಾಯಿಗಾಗಿ ದುಃಖಪಡುವವನ ಹಾಗೆ ಭಾರವುಳ್ಳವನಾಗಿ ತಲೆಬಾಗಿ ಅಳುತ್ತಿದ್ದೆನು.</verse>
				<verse number="15">ಆದರೆ ನಾನು ಎಡವಿದಾಗ ಅವರು ಸಂತೋಷಿಸುತ್ತಾ ಕೂಡಿಕೊಂಡರು; ಹೌದು, ದೂಷಕರು ನನಗೆ ತಿಳಿಯದೆ ನನ್ನ ವಿರೋಧವಾಗಿ ಕೂಡಿಕೊಂಡರು. ಅವರು ನನ್ನನ್ನು ದೂಷಿಸುವುದನ್ನು ನಿಲ್ಲಿಸಲೇ ಇಲ್ಲ.</verse>
				<verse number="16">ಔತಣಗಳಲ್ಲಿ ಗೇಲಿಮಾಡುವ ಕಪಟಿಗಳಂತೆ ಅವರು ನನ್ನ ಮೇಲೆ ಹಲ್ಲುಗಳನ್ನು ಕಡಿಯುತ್ತಾರೆ.</verse>
				<verse number="17">ಯೆಹೋವ ದೇವರೇ, ಎಷ್ಟರವರೆಗೆ ನೀವು ಸುಮ್ಮನೆ ನೋಡುತ್ತಾ ಇರುವಿರಿ? ಅವರ ಅಪಾಯಗಳಿಂದ ನನ್ನ ಪ್ರಾಣವನ್ನು ಬಿಡಿಸಿರಿ. ಆ ಸಿಂಹಗಳಿಂದ ನನ್ನ ಅಮೂಲ್ಯ ಪ್ರಾಣವನ್ನೂ ತಪ್ಪಿಸಿರಿ.</verse>
				<verse number="18">ಆಗ ನಾನು ದೊಡ್ಡ ಸಭೆಗಳಲ್ಲಿ ನಿಮ್ಮನ್ನು ಕೊಂಡಾಡುವೆನು; ಬಹುಜನರಲ್ಲಿ ನಿಮ್ಮನ್ನು ಸ್ತುತಿಸುವೆನು.</verse>
				<verse number="19">ನಿಷ್ಕಾರಣವಾಗಿರುವ ನನ್ನ ಶತ್ರುಗಳು ನನ್ನ ಮೇಲೆ ಸುಳ್ಳಾಗಿ ಸಂತೋಷಪಡದೆ ಇರಲಿ; ನನ್ನನ್ನು ಕಾರಣವಿಲ್ಲದೆ ದ್ವೇಷಿಸುವವರು ಕಣ್ಣು ಸನ್ನೆ ಮಾಡದೆ ಇರಲಿ.</verse>
				<verse number="20">ಅವರು ಅಸಮಾಧಾನವಾಗಿ ಮಾತನಾಡಿ ದೇಶದಲ್ಲಿರುವ ಶಾಂತರಾಗಿ ಬಾಳುವವರ ಮೇಲೆ ಮೋಸದ ವಿಷಯಗಳನ್ನು ಕಲ್ಪಿಸುತ್ತಾರೆ.</verse>
				<verse number="21">ಹೌದು, ಅವರು ತಮ್ಮ ಬಾಯನ್ನು ತೆರೆದು ನನಗೆ ವಿರೋಧವಾಗಿ, “ಆಹಾ, ಆಹಾ, ನಾವು ಕಣ್ಣಾರೆ ಕಂಡೆವು,” ಎನ್ನುತ್ತಾರೆ.</verse>
				<verse number="22">ಯೆಹೋವ ದೇವರೇ, ನೀವು ಇದನ್ನು ನೋಡಿದ್ದೀರಿ; ಯೆಹೋವ ದೇವರೇ, ಮೌನವಾಗಿರಬೇಡಿರಿ; ನನಗೆ ದೂರವಾಗಿರಲೂ ಬೇಡಿರಿ.</verse>
				<verse number="23">ನನ್ನ ದೇವರೇ, ನನ್ನ ಯೆಹೋವ ದೇವರೇ, ನನ್ನ ನ್ಯಾಯವನ್ನು ನಿರ್ಣಯಿಸಿರಿ, ನನ್ನ ವ್ಯಾಜ್ಯದ ಪರವಾಗಿ ಎದ್ದೇಳಿರಿ.</verse>
				<verse number="24">ಯೆಹೋವ ದೇವರೇ, ನನ್ನ ದೇವರೇ, ನಿಮ್ಮ ನೀತಿಯ ಪ್ರಕಾರ ನನಗೆ ನ್ಯಾಯತೀರಿಸಿರಿ; ಅವರು ನನ್ನ ವಿರುದ್ಧ ಸಂತೋಷಪಡದೆ ಇರಲಿ.</verse>
				<verse number="25">ಅವರು ತಮ್ಮ ಹೃದಯದಲ್ಲಿ, “ಆಹಾ, ನಮ್ಮ ಇಷ್ಟವೇ ನೆರವೇರಿತು,” ಎಂದು ಹೇಳದಿರಲಿ; “ಅವನನ್ನು ನುಂಗಿಬಿಟ್ಟೆವು,” ಎಂದೂ ಅವರು ಹೇಳದೇ ಇರಲಿ.</verse>
				<verse number="26">ನನ್ನ ಕೇಡಿನಲ್ಲಿ ಸಂತೋಷಪಡುವವರು ನಾಚಿಕೊಂಡು ಒಟ್ಟಿಗೆ ಕಳವಳಗೊಳ್ಳಲಿ; ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊಂದಲಿ.</verse>
				<verse number="27">ನನ್ನ ನೀತಿಯಲ್ಲಿ ಸಂತೋಷಪಡುವವರು ಉತ್ಸಾಹಧ್ವನಿ ಮಾಡಿ, ಆನಂದಪಡಲಿ; “ಹೌದು, ತಮ್ಮ ಸೇವಕನ ಅಭಿವೃದ್ಧಿಯಲ್ಲಿ ಸಂತೋಷಪಡುವ ಯೆಹೋವ ದೇವರು ಮಹಿಮೆಪಡಲಿ,” ಎಂದು ಅವರು ಯಾವಾಗಲೂ ಹೇಳಲಿ.</verse>
				<verse number="28">ಆಗ ನನ್ನ ನಾಲಿಗೆಯು ನಿಮ್ಮ ನೀತಿಯನ್ನೂ ದಿನವೆಲ್ಲಾ ನಿಮ್ಮ ಸ್ತೋತ್ರವನ್ನೂ ವರ್ಣಿಸುವುದು.</verse>
			</chapter>
			<chapter number="36">
				<verse number="1">ನನ್ನ ಹೃದಯದಲ್ಲಿ ದೇವರಿಂದ ಬಂದ ಸಂದೇಶವು ದುಷ್ಟರ ಪಾಪದ ಬಗ್ಗೆ ಹೀಗಿರುತ್ತದೆ: ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ.</verse>
				<verse number="2">ತಮ್ಮ ಪಾಪವನ್ನು ಹಗೆ ಮಾಡದೆ ಅಥವಾ ಪಾಪವನ್ನು ತಾವು ಕಂಡುಕೊಳ್ಳಲಾರದಷ್ಟು ಅವರು ತಮ್ಮ ದೃಷ್ಟಿಯಲ್ಲಿ ತಮ್ಮನ್ನು ತಾವೇ ಹೊಗಳಿಕೊಳ್ಳುತ್ತಾರೆ.</verse>
				<verse number="3">ಅವರ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿರುತ್ತವೆ; ಬುದ್ಧಿಯಿಂದ ನಡೆಯುವುದನ್ನೂ ಒಳ್ಳೆಯದನ್ನು ಮಾಡುವುದನ್ನೂ ಅವರು ಬಿಟ್ಟಿದ್ದಾರೆ.</verse>
				<verse number="4">ಕುಯುಕ್ತಿಯನ್ನು ತಮ್ಮ ಹಾಸಿಗೆಯ ಮೇಲೆ ಕಲ್ಪಿಸುತ್ತಾರೆ; ಪಾಪದ ಮಾರ್ಗಕ್ಕೆ ತಮ್ಮನ್ನು ಅರ್ಪಿಸಿಕೊಳ್ಳುತ್ತಾರೆ; ಅವರು ಕೆಟ್ಟದ್ದಕ್ಕೆ ಅಸಹ್ಯಪಡುವುದಿಲ್ಲ.</verse>
				<verse number="5">ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ಆಕಾಶವನ್ನು ಮುಟ್ಟುತ್ತದೆ; ನಿಮ್ಮ ನಂಬಿಗಸ್ತಿಕೆಯು ಮೇಘಗಳವರೆಗೆ ಮುಟ್ಟಿದೆ.</verse>
				<verse number="6">ನಿಮ್ಮ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿಮ್ಮ ನ್ಯಾಯತೀರ್ಪುಗಳು ಮಹಾ ಅಗಾಧವೇ. ಯೆಹೋವ ದೇವರೇ, ನೀವು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀರಿ.</verse>
				<verse number="7">ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ಎಷ್ಟೋ ಅಮೂಲ್ಯವಾದದ್ದು! ಮನುಷ್ಯರು ನಿಮ್ಮ ರೆಕ್ಕೆಗಳ ನೆರಳಿನಲ್ಲಿ ಆಶ್ರಯಪಡೆಯುತ್ತಾರೆ.</verse>
				<verse number="8">ನಿಮ್ಮ ಆಲಯದ ಸಮೃದ್ಧಿಯಿಂದ ಅವರು ಸಂತೃಪ್ತಿ ಹೊಂದುವರು; ನಿಮ್ಮ ಹರ್ಷ ನದಿಯಿಂದ ಅವರಿಗೆ ಕುಡಿಯಲು ಕೊಡುವಿರಿ.</verse>
				<verse number="9">ಏಕೆಂದರೆ ನಿಮ್ಮ ಬಳಿಯಲ್ಲಿ ಜೀವದ ಬುಗ್ಗೆ ಉಂಟು; ನಿಮ್ಮ ಬೆಳಕಿನಲ್ಲಿ ನಾವು ಬೆಳಕನ್ನು ಕಾಣುವೆವು.</verse>
				<verse number="10">ನಿಮ್ಮನ್ನು ತಿಳಿದವರಿಗೆ ನಿಮ್ಮ ಪ್ರೀತಿಯು ಮುಂದುವರೆಯಲಿ ಯಥಾರ್ಥ ಹೃದಯದವರಿಗೆ ನಿಮ್ಮ ನೀತಿಯೂ ನೆಲೆಯಾಗಲಿ.</verse>
				<verse number="11">ಗರ್ವಿಷ್ಠರ ಪಾದ ನನಗೆ ವಿರೋಧವಾಗಿ ಬಾರದೇ ಇರಲಿ; ದುಷ್ಟರ ಕೈ ನನ್ನನ್ನು ತೆಗೆದು ಹಾಕದಿರಲಿ.</verse>
				<verse number="12">ಕೇಡು ಮಾಡುವವರು ಬಿದ್ದಿದ್ದಾರೆ. ಅವರು ಏಳಲಾರದೆ ಕೆಳಗೆ ಬಿದ್ದಿದ್ದಾರೆ.</verse>
			</chapter>
			<chapter number="37">
				<verse number="1">ಕೆಟ್ಟವರನ್ನು ನೋಡಿ ಕೋಪಿಸಿಕೊಳ್ಳಬೇಡ. ಇಲ್ಲವೆ ಅಕ್ರಮ ಮಾಡುವವರ ಬಗ್ಗೆ ಹೊಟ್ಟೆಕಿಚ್ಚುಪಡಬೇಡ.</verse>
				<verse number="2">ಏಕೆಂದರೆ, ಅವರು ಹುಲ್ಲಿನ ಹಾಗೆ ಬೇಗ ಒಣಗಿ ಹೋಗುವರು. ಹಸಿರಾದ ಸೊಪ್ಪಿನ ಹಾಗೆ ಬಾಡಿಹೋಗುವರು.</verse>
				<verse number="3">ಯೆಹೋವ ದೇವರಲ್ಲಿ ಭರವಸೆ ಇಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ಹಸಿರುಗಾವಲನ್ನು ಅನುಭವಿಸುವಿ.</verse>
				<verse number="4">ಯೆಹೋವ ದೇವರಲ್ಲಿ ಆನಂದವಾಗಿರು; ಆಗ ಅವರು ನಿನ್ನ ಹೃದಯದ ಅಪೇಕ್ಷೆಗಳನ್ನು ಈಡೇರಿಸುವರು.</verse>
				<verse number="5">ನಿನ್ನ ಮಾರ್ಗವನ್ನು ಯೆಹೋವ ದೇವರಿಗೆ ಒಪ್ಪಿಸು; ಅವರಲ್ಲಿ ಭರವಸೆ ಇಡು; ಅವರು ನಿನಗೆ ಇದನ್ನು ಮಾಡುವರು:</verse>
				<verse number="6">ಅವರು ನಿನ್ನ ನೀತಿಯನ್ನು ಉದಯದ ಬೆಳಕಿನ ಹಾಗೆ ಮಾಡುವರು, ಅವರು ನಿನ್ನ ನ್ಯಾಯವನ್ನು ಮಧ್ಯಾಹ್ನದ ಸೂರ್ಯನ ಹಾಗೆ ಹೊಳೆಯುವಂತೆ ಮಾಡುವರು.</verse>
				<verse number="7">ಯೆಹೋವ ದೇವರ ಮುಂದೆ ಶಾಂತನಾಗಿರು; ಮೌನವಾಗಿದ್ದು ಅವರಿಗಾಗಿ ಎದುರು ನೋಡು; ತಮ್ಮ ಮಾರ್ಗದಲ್ಲಿ ಸಫಲವಾಗುವವರನ್ನು ಕಂಡು ಸಿಡುಕಬೇಡ. ಕುಯುಕ್ತಿಗಳನ್ನು ನಡೆಸುವ ಮನುಷ್ಯರನ್ನು ಕಂಡು ಕೋಪ ಮಾಡಿಕೊಳ್ಳಬೇಡ.</verse>
				<verse number="8">ಕೋಪವನ್ನು ಅಡಗಿಸು ಮತ್ತು ರೋಷವನ್ನು ಬಿಡು. ಸಿಡುಕಬೇಡ, ಅದು ಕೆಟ್ಟತನಕ್ಕೆ ನಡೆಸುತ್ತದೆ.</verse>
				<verse number="9">ಏಕೆಂದರೆ, ದುರ್ಮಾರ್ಗಿಗಳು ನಾಶವಾಗುವರು; ಯೆಹೋವ ದೇವರನ್ನು ನಿರೀಕ್ಷಿಸುವವರೇ ಭೂಮಿಯನ್ನು ಸ್ವಾಧೀನಮಾಡಿಕೊಳ್ಳುವರು.</verse>
				<verse number="10">ಇನ್ನು ಸ್ವಲ್ಪ ಸಮಯದಲ್ಲಿ ದುಷ್ಟನು ಕಾಣದೆ ಹೋಗುವನು. ಅವನನ್ನು ಹುಡುಕಿದರೂ ಸಿಕ್ಕುವುದೇ ಇಲ್ಲ.</verse>
				<verse number="11">ಆದರೆ ಸಾತ್ವಿಕರು ಭೂಮಿಯನ್ನು ಸ್ವಾಧೀನಮಾಡಿಕೊಳ್ಳುವರು. ದೀನರು ಬಹಳ ಸಮಾಧಾನವನ್ನೂ ಸಮೃದ್ಧಿಯನ್ನು ಅನುಭವಿಸುವರು.</verse>
				<verse number="12">ದುಷ್ಟನು ನೀತಿವಂತನಿಗಾಗಿ ಒಳಸಂಚು ಮಾಡುತ್ತಾನೆ, ಆದರೆ ಅವನನ್ನು ಕಂಡು ಹಲ್ಲು ಕಡಿಯುತ್ತಾನೆ.</verse>
				<verse number="13">ದುಷ್ಟನ ದಿವಸ ಬರುತ್ತದೆಂದು ತಿಳಿದು ಯೆಹೋವ ದೇವರು ನಗುತ್ತಾರೆ.</verse>
				<verse number="14">ದುಷ್ಟರು ಬಡವನನ್ನೂ ದೀನನನ್ನೂ ಬೀಳಿಸಬೇಕೆಂದು ಖಡ್ಗವನ್ನು ಹಿರಿದಿದ್ದಾರೆ, ಸನ್ಮಾರ್ಗದವರನ್ನು ಕೊಲ್ಲುವುದಕ್ಕೂ ತಮ್ಮ ಬಿಲ್ಲುಗಳನ್ನು ಬಗ್ಗಿಸಿದ್ದಾರೆ.</verse>
				<verse number="15">ಆದರೆ ಅವರ ಖಡ್ಗ ಅವರ ಹೃದಯದಲ್ಲಿ ಇರಿದು ಬಿಡುವುದು; ಅವರ ಬಿಲ್ಲುಗಳು ಮುರಿದುಹೋಗುವವು.</verse>
				<verse number="16">ದುಷ್ಟರ ಐಶ್ವರ್ಯಕ್ಕಿಂತ ನೀತಿವಂತರ ಅಲ್ಪವೇ ಲೇಸು.</verse>
				<verse number="17">ಏಕೆಂದರೆ ದುಷ್ಟರ ತೋಳುಗಳು ಮುರಿದುಹೋಗುವವು, ಆದರೆ ನೀತಿವಂತರನ್ನು ಯೆಹೋವ ದೇವರು ಉದ್ಧಾರ ಮಾಡುವರು.</verse>
				<verse number="18">ನಿರ್ದೋಷಿಗಳು ತಮ್ಮ ದಿವಸಗಳನ್ನು ಯೆಹೋವ ದೇವರ ಪರಾಮರಿಕೆಯಲ್ಲಿ ಕಳೆಯುವರು. ನಿರಪರಾಧಿಯ ಬಾಧ್ಯತೆಯು ಯುಗಯುಗಕ್ಕೂ ಇರುವುದು.</verse>
				<verse number="19">ಆಪತ್ಕಾಲದಲ್ಲಿ ಅವರು ಕುಂದುವುದಿಲ್ಲ; ಕ್ಷಾಮದ ದಿವಸಗಳಲ್ಲಿ ಸಮೃದ್ಧಿಯನ್ನು ಅನುಭವಿಸುವರು.</verse>
				<verse number="20">ಆದರೆ ದುಷ್ಟರು ನಾಶವಾಗುವರು; ಯೆಹೋವ ದೇವರ ಶತ್ರುಗಳು ಗದ್ದೆಯ ಹೂಗಳಂತೆ ಬಾಡಿಹೋಗುವರು; ಹೊಗೆಯಂತೆ ಮಾಯವಾಗುವರು.</verse>
				<verse number="21">ದುಷ್ಟನು ಸಾಲ ಮಾಡಿ ಹಿಂದಿರುಗಿ ಕೊಡದೆ ಹೋಗುವನು. ಆದರೆ ನೀತಿವಂತನು ಧಾರಾಳವಾಗಿ ಕೊಡುತ್ತಾನೆ.</verse>
				<verse number="22">ಯೆಹೋವ ದೇವರು ಆಶೀರ್ವದಿಸುವವರು, ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವರು; ಆದರೆ ದೇವರ ಶಾಪಕ್ಕೆ ಗುರಿಯಾಗುವವರು ನಾಶವಾಗುವರು.</verse>
				<verse number="23">ಯೆಹೋವ ದೇವರಲ್ಲಿ ಯಾರು ಹರ್ಷಿಸುತ್ತಾರೋ ಅವರ ಹೆಜ್ಜೆಗಳನ್ನು ಸ್ಥಿರಪಡಿಸುವರು.</verse>
				<verse number="24">ಅವನು ಎಡವಿದರೂ ಬಿದ್ದುಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರು ತಾವೇ ತಮ್ಮ ಕೈಯಿಂದ ಅವನನ್ನು ಎತ್ತಿಹಿಡಿಯುವರು.</verse>
				<verse number="25">ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಟ್ಟಿರುವುದನ್ನಾಗಲಿ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆ ಬೇಡುವುದನ್ನಾಗಲಿ ಎಂದೂ ನಾನು ನೋಡಲಿಲ್ಲ.</verse>
				<verse number="26">ಅವರು ಯಾವಾಗಲೂ ಧಾರಾಳವಾಗಿ ಸಾಲ ಕೊಡುತ್ತಾರೆ; ನೀತಿವಂತನ ಸಂತತಿಯವರು ಆಶೀರ್ವಾದ ಹೊಂದುವರು.</verse>
				<verse number="27">ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು, ಆಗ ಯುಗಯುಗಕ್ಕೂ ನಾಡಿನಲ್ಲಿ ವಾಸಮಾಡುವೆ.</verse>
				<verse number="28">ಏಕೆಂದರೆ ಯೆಹೋವ ದೇವರು ನ್ಯಾಯವನ್ನು ಪ್ರೀತಿಸುತ್ತಾರೆ; ತಮ್ಮ ನಂಬಿಗಸ್ತ ಜನರನ್ನು ತೊರೆದುಬಿಡರು. ನೀತಿವಂತರು ಸದಾಕಾಲಕವೂ ಸುರಕ್ಷಿತರಾಗಿರುವರು; ಆದರೆ ದುಷ್ಟರ ಸಂತತಿಯು ಅಳಿದುಹೋಗುವುದು.</verse>
				<verse number="29">ನೀತಿವಂತರು ಭೂಮಿಯನ್ನು ಸ್ವಾಧೀನಮಾಡಿಕೊಂಡು ಎಂದೆಂದಿಗೂ ಅದರಲ್ಲಿ ವಾಸವಾಗಿರುವರು.</verse>
				<verse number="30">ನೀತಿವಂತನ ಬಾಯಿ ಜ್ಞಾನವನ್ನು ನುಡಿಯುವುದು; ಅವನ ನಾಲಿಗೆ ನ್ಯಾಯವನ್ನು ಮಾತನಾಡುವುದು.</verse>
				<verse number="31">ಅವನ ದೇವರ ನಿಯಮವೂ ಅವನ ಹೃದಯದಲ್ಲಿ ಇದೆ; ಅವನ ಹೆಜ್ಜೆ ಕದಲುವುದಿಲ್ಲ.</verse>
				<verse number="32">ದುಷ್ಟನು ನೀತಿವಂತನಿಗಾಗಿ ಒಳಸಂಚು ಮಾಡುತ್ತಾನೆ; ಅವನನ್ನು ಕೊಲ್ಲಲು ಹುಡುಕುತ್ತಾನೆ.</verse>
				<verse number="33">ಆದರೆ ಯೆಹೋವ ದೇವರು ಅವನನ್ನು ದುಷ್ಟನ ಕೈಯಲ್ಲಿ ಬಿಡುವುದಿಲ್ಲ; ನ್ಯಾಯ ವಿಚಾರಣೆಯಲ್ಲಿ ನೀತಿವಂತನನ್ನು ಅಪರಾಧಿಯೆಂದು ತೀರ್ಪು ಕೊಡುವುದಿಲ್ಲ.</verse>
				<verse number="34">ಯೆಹೋವ ದೇವರನ್ನು ನಿರೀಕ್ಷಿಸು; ಅವರ ಮಾರ್ಗದಲ್ಲಿ ನಡೆ; ಆಗ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವಂತೆ ನಿನ್ನನ್ನು ಅವರು ಉನ್ನತಕ್ಕೆ ತರುವರು; ದುಷ್ಟರ ವಿನಾಶವನ್ನು ನೀವು ಕಾಣುವಿರಿ.</verse>
				<verse number="35">ದುಷ್ಟರು ದೊಡ್ಡ ಅಧಿಕಾರದಲ್ಲಿರುವುದನ್ನು ನಾನು ಕಂಡೆನು; ಅವರು ಹಸಿರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದರು.</verse>
				<verse number="36">ಆದರೆ ಅವರು ಅಳಿದೇ ಹೋದರು; ಅವರನ್ನು ಹುಡುಕಿದೆನು; ಆದರೆ ಅವರು ಸಿಕ್ಕಲಿಲ್ಲ.</verse>
				<verse number="37">ನಿರ್ದೋಷಿಯನ್ನು ಗಮನಿಸು; ಯಥಾರ್ಥನನ್ನು ನೋಡು; ಸಮಾಧಾನ ಹುಡುಕುವವರಿಗೆ ಒಳ್ಳೆಯ ಭವಿಷ್ಯವಿದೆ.</verse>
				<verse number="38">ಆದರೆ ದ್ರೋಹಿಗಳೆಲ್ಲರೂ ನಾಶವಾಗುವರು; ದುಷ್ಟರಿಗೆ ಒಳ್ಳೆಯ ಭವಿಷ್ಯವಿಲ್ಲ.</verse>
				<verse number="39">ನೀತಿವಂತರ ರಕ್ಷಣೆಯು ಯೆಹೋವ ದೇವರಿಂದಲೇ; ಇಕ್ಕಟ್ಟಿನ ಕಾಲದಲ್ಲಿ ದೇವರೇ ಅವರ ಕೋಟೆ.</verse>
				<verse number="40">ಯೆಹೋವ ದೇವರು ಅವರಿಗೆ ಸಹಾಯಮಾಡಿ ಅವರನ್ನು ಬಿಡಿಸುವರು. ದುಷ್ಟರಿಂದ ಅವರನ್ನು ತಪ್ಪಿಸಿ ಬಿಡಿಸುವರು. ಏಕೆಂದರೆ ಅವರು ದೇವರಲ್ಲಿ ಆಶ್ರಯ ಪಡೆದಿದ್ದಾರೆ.</verse>
			</chapter>
			<chapter number="38">
				<verse number="1">ಯೆಹೋವ ದೇವರೇ, ನೀವು ಬೇಸರದಿಂದ ನನ್ನನ್ನು ಗದರಿಸಬೇಡಿರಿ; ಮನನೊಂದು ನನ್ನನ್ನು ಶಿಕ್ಷಿಸಬೇಡಿರಿ.</verse>
				<verse number="2">ಏಕೆಂದರೆ, ನಿಮ್ಮ ಬಾಣಗಳು ನನ್ನಲ್ಲಿ ನಾಟಿವೆ. ನಿಮ್ಮ ಶಿಕ್ಷಾ ಹಸ್ತವು ನನ್ನ ಮೇಲೆ ಭಾರವಾಗಿದೆ.</verse>
				<verse number="3">ನಿಮ್ಮ ಬೇಸರದ ನಿಮಿತ್ತ ನನ್ನ ಶರೀರದಲ್ಲಿ ಸ್ವಸ್ಥತೆ ಏನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ಕ್ಷೇಮವೇ ಇಲ್ಲ.</verse>
				<verse number="4">ಏಕೆಂದರೆ, ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿ ಹೋಗಿವೆ; ದೋಷ ಭಾವನೆಯ ಹೊರೆಯು ನನಗೆ ಬಹುಭಾರವಾಗಿವೆ.</verse>
				<verse number="5">ನನ್ನ ಮೂರ್ಖತನದ ನಿಮಿತ್ತ ನನಗಾದ ಗಾಯಗಳು ದುರ್ವಾಸನೆಯಿಂದ ಕೀವು ತುಂಬಿವೆ.</verse>
				<verse number="6">ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ. ದಿನವೆಲ್ಲಾ ದುಃಖದಿಂದ ನಾನು ಅಲೆಯುತ್ತಿದ್ದೇನೆ.</verse>
				<verse number="7">ನನ್ನ ಸೊಂಟ ಬಹು ಬೇನೆಯಿಂದ ತುಂಬಿದೆ. ನನ್ನ ದೇಹದಲ್ಲಿ ಕ್ಷೇಮವೇ ಇಲ್ಲ.</verse>
				<verse number="8">ಬಲಹೀನನಾಗಿದ್ದೇನೆ, ಬಹಳ ಜಜ್ಜಿ ಹೋಗಿದ್ದೇನೆ; ನನ್ನ ಹೃದಯದ ವೇದನೆಯಿಂದ ನರಳುತ್ತಾ ಇದ್ದೇನೆ.</verse>
				<verse number="9">ಯೆಹೋವ ದೇವರೇ, ನಿಮಗೆ ನನ್ನ ಅಪೇಕ್ಷೆಗಳೆಲ್ಲಾ ಗೊತ್ತೇ ಇದೆ; ನನ್ನ ನಿಟ್ಟುಸಿರು ನಿಮಗೆ ಮರೆಯಾದದ್ದಲ್ಲ.</verse>
				<verse number="10">ನನ್ನ ಹೃದಯ ಬಡಿದುಕೊಳ್ಳುತ್ತದೆ. ನನ್ನ ಶಕ್ತಿಯು ನನ್ನನ್ನು ಬಿಟ್ಟುಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ಹೋಗಿಬಿಟ್ಟಿದೆ.</verse>
				<verse number="11">ನನ್ನ ಪ್ರಿಯರೂ, ನನ್ನ ಸ್ನೇಹಿತರೂ ನನ್ನ ಬಾಧೆಗೆ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.</verse>
				<verse number="12">ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಆಲೋಚಿಸುತ್ತಾರೆ.</verse>
				<verse number="13">ಆದರೆ ನಾನು ಕಿವುಡನ ಹಾಗೆ ಕೇಳಿಸಿಕೊಳ್ಳುವುದಿಲ್ಲ; ತನ್ನ ಬಾಯಿ ತೆರೆಯದ ಮೂಕನ ಹಾಗಿದ್ದೇನೆ.</verse>
				<verse number="14">ನಾನು ಕಿವಿ ಕೇಳಿಸದವನಂತೆ ಇದ್ದೇನೆ. ನಾನು ಪ್ರತ್ಯುತ್ತರ ಕೊಡಲಾರದಂತೆಯೂ ಇದ್ದೇನೆ.</verse>
				<verse number="15">ಯೆಹೋವ ದೇವರೇ, ನಿಮ್ಮನ್ನೇ ಎದುರು ನೋಡುತ್ತೇನೆ; ನನ್ನ ದೇವರಾದ ಯೆಹೋವ ದೇವರೇ, ನೀವು ಉತ್ತರ ಕೊಡುವಿರಿ.</verse>
				<verse number="16">ಏಕೆಂದರೆ ನಾನು, “ಅವರು ನನಗೋಸ್ಕರ ಸಂತೋಷಪಡದೆ ಇರಲಿ ನನ್ನ ಪಾದ ಜಾರುವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿಕೊಳ್ಳದಿರಲಿ,” ಎಂದುಕೊಂಡೆನು.</verse>
				<verse number="17">ನಾನು ಎಡವಿ ಬೀಳಲಿದ್ದೇನೆ; ನನ್ನ ನೋವು ಯಾವಾಗಲೂ ನನ್ನ ಮುಂದೆ ಇದೆ.</verse>
				<verse number="18">ನನ್ನ ಅಕ್ರಮವನ್ನು ಅರಿಕೆ ಮಾಡುವೆನು; ನನ್ನ ಪಾಪಕ್ಕೋಸ್ಕರ ದುಃಖಪಡುವೆನು.</verse>
				<verse number="19">ನನ್ನ ಶತ್ರುಗಳು ಬಲಗೊಂಡಿದ್ದಾರೆ. ನನ್ನನ್ನು ವಿನಾಕಾರಣವಾಗಿ ದ್ವೇಷಿಸುವವರು ಹೆಚ್ಚಿದ್ದಾರೆ.</verse>
				<verse number="20">ನನ್ನ ಶತ್ರುಗಳು ಒಳ್ಳೆಯದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುತ್ತಿದ್ದಾರೆ. ನಾನು ಒಳ್ಳೆಯದನ್ನು ಹಿಂದಟ್ಟುವ ಕಾರಣ ನನ್ನನ್ನು ಎದುರಿಸುತ್ತಾರೆ.</verse>
				<verse number="21">ಯೆಹೋವ ದೇವರೇ, ನನ್ನನ್ನು ಬಿಡಬೇಡಿರಿ; ನನ್ನ ದೇವರೇ, ನನಗೆ ದೂರವಾಗಿರಬೇಡಿರಿ.</verse>
				<verse number="22">ನನ್ನ ರಕ್ಷಕ ಆಗಿರುವ ಯೆಹೋವ ದೇವರೇ, ನನ್ನ ಸಹಾಯಕ್ಕೆ ಬೇಗ ಬನ್ನಿರಿ.</verse>
			</chapter>
			<chapter number="39">
				<verse number="1">“ನನ್ನ ನಾಲಿಗೆಯಿಂದ ಪಾಪಮಾಡದಂತೆ ಜಾಗರೂಕನಾಗಿರುವೆನು, ನನ್ನ ಮಾರ್ಗಗಳನ್ನು ಕಾಪಾಡಿಕೊಳ್ಳುವೆನು. ದುಷ್ಟರು ನನ್ನ ಮುಂದೆ ಇರುವಾಗ ನನ್ನ ಬಾಯಿಗೆ ಕಡಿವಾಣ ಹಾಕಿಕೊಳ್ಳುವೆನು,” ಎಂದು ತೀರ್ಮಾನಿಸಿಕೊಂಡೆನು.</verse>
				<verse number="2">ಆದ್ದರಿಂದ ನಾನು ಮೌನವಾಗಿದ್ದೆನು. ಒಳ್ಳೆಯದನ್ನು ಸಹ ನಾನು ಆಡದೆ ಸುಮ್ಮನಿದ್ದೆನು. ಆದರೆ ನನ್ನ ವ್ಯಥೆಯು ಅಧಿಕವಾಯಿತು.</verse>
				<verse number="3">ನನ್ನ ಹೃದಯವು ಸಂತಾಪದಿಂದ ಕಾವೇರಿತು. ನಾನು ಧ್ಯಾನವು ಬೆಂಕಿಯಂತೆ ಉರಿಯಿತು. ಕೊನೆಗೆ ನಾನು ಬಾಯಿಬಿಟ್ಟು ಮಾತನಾಡಿದೆನು:</verse>
				<verse number="4">“ಯೆಹೋವ ದೇವರೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ ನನ್ನ ಜೀವನದ ಅಂತ್ಯವ ನನಗೆ ತೋರಿಸಿಕೊಡಿರಿ, ನನ್ನ ದಿನಗಳು ಕೊಂಚವೆಂಬುದನ್ನೂ ನನಗೆ ತಿಳಿಸಿರಿ.</verse>
				<verse number="5">ಇಗೋ, ನನ್ನ ದಿವಸಗಳನ್ನು ಅಂಗೈ ಅಗಲದಷ್ಟು ಮಾಡಿದ್ದೀರಿ. ನನ್ನ ಆಯುಷ್ಯವು ನಿಮ್ಮ ಮುಂದೆ ಏನೂ ಇಲ್ಲದ ಹಾಗಿದೆ; ಪ್ರತಿ ಮನುಷ್ಯನ ಜೀವನ ಬರೀ ಉಸಿರೇ.</verse>
				<verse number="6">“ನಿಶ್ಚಯವಾಗಿ ಮನುಷ್ಯನು ಮಾಯಾರೂಪದಿಂದ ನಡೆದಾಡುತ್ತಾನೆ; ಅವನು ಸಡಗರದಿಂದ ಐಶ್ವರ್ಯವನ್ನು ರಾಶಿಯಾಗಿ ಕೂಡಿಸಿಕೊಳ್ಳುತ್ತಾನೆ; ಆದರೆ ಅದನ್ನು ಅನುಭವಿಸುವವರು ಯಾರೋ ಅರಿಯನು.</verse>
				<verse number="7">“ಹೀಗಿರಲಾಗಿ ಯೆಹೋವ ದೇವರೇ, ನಾನು ನಿರೀಕ್ಷಿಸುವುದೇನು? ನನ್ನ ನಿರೀಕ್ಷೆ ನಿಮ್ಮಲ್ಲಿ ಇದೆ.</verse>
				<verse number="8">ನನ್ನ ಎಲ್ಲಾ ಉಲ್ಲಂಘನೆಗಳಿಂದ ನನ್ನನ್ನು ಬಿಡಿಸಿರಿ; ಬುದ್ಧಿಹೀನನ ನಿಂದೆಗೆ ನನ್ನನ್ನು ಪರಿಹಾಸ್ಯ ಮಾಡಬೇಡಿರಿ.</verse>
				<verse number="9">ನಾನು ಮೌನವಾದೆನು, ಬಾಯಿ ತೆರೆಯಲಿಲ್ಲ; ಇದನ್ನು ಮಾಡಿದವರು ನೀವೇ.</verse>
				<verse number="10">ನಿಮ್ಮ ಪೆಟ್ಟನ್ನು ನನ್ನಿಂದ ತೊಲಗಿಸಿರಿ; ನಿಮ್ಮ ಕೈಯ ಹೊಡೆತದಿಂದ ನಾನು ಕುಗ್ಗಿ ಹೋಗಿದ್ದೇನೆ.</verse>
				<verse number="11">ಪಾಪದ ನಿಮಿತ್ತ ನೀವು ಮನುಷ್ಯನನ್ನು ಗದರಿಸಿ ಶಿಕ್ಷಿಸುವಾಗ ಅವನ ಐಶ್ವರ್ಯವು ನುಸಿ ಹಿಡಿದಂತೆ ಹಾಳಾಗಿ ಹೋಗುತ್ತದೆ. ನಿಶ್ಚಯವಾಗಿ ಪ್ರತಿ ಮನುಷ್ಯನು ಬರೀ ಉಸಿರೇ.</verse>
				<verse number="12">“ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ; ನನ್ನ ಮೊರೆಗೆ ಕಿವಿಗೊಡಿರಿ; ನನ್ನ ಕಣ್ಣೀರನ್ನು ನೋಡಿರಿ ಮೌನವಾಗಿರಬೇಡಿರಿ; ಏಕೆಂದರೆ, ನಾನು ನನ್ನ ಪಿತೃಗಳೆಲ್ಲರ ಹಾಗೆ ನಿಮ್ಮ ಸಂಗಡ ಪರದೇಶಸ್ಥನಂತೆ ವಾಸಿಸುತ್ತೇನೆ; ನಾನೂ ಪ್ರವಾಸಿಯಾಗಿದ್ದೇನೆ.</verse>
				<verse number="13">ನಾನು ಹೊರಟುಹೋಗಿ ಇಲ್ಲವಾಗುವ ಮೊದಲು ನಾನು ಪುನಃ ಸಂತೋಷಿಸುವಂತೆ ನಿಮ್ಮ ಕೋಪದ ದೃಷ್ಟಿಯನ್ನು ಬೇರೆ ಕಡೆ ತಿರುಗಿಸಿರಿ.”</verse>
			</chapter>
			<chapter number="40">
				<verse number="1">ನಾನು ಯೆಹೋವ ದೇವರಿಗಾಗಿ ತಾಳ್ಮೆಯಿಂದ ಕಾದಿದ್ದೆನು; ಅವರು ನನ್ನ ಕಡೆಗೆ ತಿರುಗಿ, ನನ್ನ ಮೊರೆಯನ್ನು ಕೇಳಿದರು.</verse>
				<verse number="2">ನನ್ನನ್ನು ಜಾರುವ ಗುಂಡಿಯೊಳಗಿಂದ ಎತ್ತಿದರು. ಕೆಸರಿನ ಮಣ್ಣಿನಿಂದ ಎಬ್ಬಿಸಿದರು. ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ, ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದರು.</verse>
				<verse number="3">ನನ್ನ ಬಾಯಲ್ಲಿ ನೂತನ ಹಾಡನ್ನು ಹುಟ್ಟಿಸಿದ್ದಾರೆ, ಆ ಹಾಡು ನಮ್ಮ ದೇವರ ಸ್ತೋತ್ರವೇ. ಅನೇಕರು ಇದನ್ನು ಕಂಡು, ಭಯಪಟ್ಟು ಯೆಹೋವ ದೇವರಲ್ಲಿ ಭರವಸೆ ಇಡುವರು.</verse>
				<verse number="4">ಯೆಹೋವ ದೇವರನ್ನು ತನ್ನ ಭರವಸೆಯಾಗಿ ಮಾಡಿಕೊಂಡು ಅಹಂಕಾರಿಗಳನ್ನು ಗೌರವಿಸದೆಯೂ ಇಲ್ಲವೆ ಸುಳ್ಳಿನ ಕಡೆಗೆ ತಿರುಗಿಕೊಳ್ಳದೆಯೂ ಇರುವ ಮನುಷ್ಯನು ಧನ್ಯನು.</verse>
				<verse number="5">ನನ್ನ ದೇವರಾದ ಯೆಹೋವ ದೇವರೇ, ನೀವು ಮಾಡಿದ ನಿಮ್ಮ ಅದ್ಭುತಕಾರ್ಯಗಳು ಎಷ್ಟೋ! ನಮ್ಮ ಕಡೆ ನಿಮಗಿರುವ ಯೋಜನೆಗಳೂ ಬಹಳ, ನಿಮಗೆ ಸರಿಸಾಟಿ ಯಾರೂ ಇಲ್ಲ. ನಿಮ್ಮ ಕೃತ್ಯಗಳನ್ನು ನಾನು ತಿಳಿಸಿ ಹೇಳಬೇಕಾದರೆ, ಅವು ಎಣಿಸಲು ಅಸಾಧ್ಯ.</verse>
				<verse number="6">ಯಜ್ಞ ಮತ್ತು ಅರ್ಪಣೆಯನ್ನು ನೀವು ಇಷ್ಟಪಡಲಿಲ್ಲ. ಆದರೆ ನೀವು ನನ್ನ ಕಿವಿಗಳನ್ನು ತೆರೆದಿರುವಿರಿ. ದಹನಬಲಿಗಳನ್ನೂ ಪಾಪ ಪರಿಹಾರದ ಬಲಿಗಳನ್ನೂ ನೀವು ಬಯಸಲಿಲ್ಲ.</verse>
				<verse number="7">ಆಗ ನಾನು, “ಇಗೋ, ನಾನು ಇದ್ದೇನೆ, ನಾನು ಬಂದಿದ್ದೇನೆ. ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿದೆ.</verse>
				<verse number="8">ನನ್ನ ದೇವರೇ, ನಿಮ್ಮ ಚಿತ್ತವನ್ನು ಮಾಡಲು ಬಯಸುತ್ತೇನೆ; ನಿಮ್ಮ ನಿಯಮವು ನನ್ನ ಅಂತರಂಗದಲ್ಲಿ ಇದೆ.”</verse>
				<verse number="9">ನಾನು ನಿಮ್ಮ ನೀತಿಯನ್ನು ದೊಡ್ಡ ಸಭೆಯಲ್ಲಿ ಸಾರಿದೆನು; ಇಗೋ, ನಾನು ನನ್ನ ತುಟಿಗಳಿಂದ ಸಾರದೆ ಇರಲಿಲ್ಲವೆಂದು ನೀವೇ ತಿಳಿದಿದ್ದೀರಿ.</verse>
				<verse number="10">ನಾನು ನಿಮ್ಮ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಿಟ್ಟುಕೊಳ್ಳಲಿಲ್ಲ. ನಿಮ್ಮ ನಂಬಿಗಸ್ತಿಕೆಯನ್ನೂ ನಿಮ್ಮ ರಕ್ಷಣೆಯನ್ನೂ ನಿಮ್ಮ ಪ್ರೀತಿಯನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡದೆ ಸಾರಿದೆನು.</verse>
				<verse number="11">ಯೆಹೋವ ದೇವರೇ, ನಿಮ್ಮ ಕರುಣೆಯನ್ನು ನನ್ನಿಂದ ಹಿಂತೆಗೆಯಬೇಡಿರಿ; ನಿಮ್ಮ ಪ್ರೀತಿಯೂ ನಿಮ್ಮ ಸತ್ಯವೂ ಯಾವಾಗಲೂ ನನ್ನನ್ನು ಕಾಯಲಿ.</verse>
				<verse number="12">ಲೆಕ್ಕವಿಲ್ಲದಷ್ಟು ಕೇಡುಗಳು ನನ್ನನ್ನು ಸುತ್ತಿಕೊಂಡಿವೆ. ನಾನು ಏನೂ ನೋಡಲಾರದಷ್ಟು ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿವೆ; ನನ್ನ ಪಾಪಗಳು ತಲೆಯ ಕೂದಲುಗಳಿಗಿಂತ ಹೆಚ್ಚಾಗಿವೆ, ಆದ್ದರಿಂದ ನನ್ನ ಹೃದಯವು ಕುಂದಿಹೋಗಿದೆ.</verse>
				<verse number="13">ಯೆಹೋವ ದೇವರೇ, ನನ್ನನ್ನು ಬಿಡಿಸುವುದಕ್ಕೆ ತ್ವರೆಮಾಡಿರಿ. ಯೆಹೋವ ದೇವರೇ, ನನಗೆ ಸಹಾಯಮಾಡಲು ಬೇಗನೆ ಬನ್ನಿರಿ.</verse>
				<verse number="14">ನನ್ನ ಪ್ರಾಣ ತೆಗೆಯಲು ಯತ್ನಿಸುವವರೆಲ್ಲರು ನಾಚಿಕೆಪಟ್ಟು ಗಲಿಬಿಲಿಯಾಗಲಿ. ನನ್ನ ಕೇಡಿನಲ್ಲಿ ಸಂತೋಷಪಡುವವರೆಲ್ಲರೂ ಹಿಂಜರಿದು ಅವಮಾನ ಹೊಂದಲಿ.</verse>
				<verse number="15">“ಆಹಾ! ಆಹಾ!” ಎಂದು ನನ್ನನ್ನು ಹಾಸ್ಯಮಾಡುವವರು ತಮ್ಮ ನಾಚಿಕೆಯಿಂದಲೇ ವಿಸ್ಮಯಗೊಳ್ಳಲಿ.</verse>
				<verse number="16">ಆದರೆ, ನಿಮ್ಮನ್ನು ಹುಡುಕುವವರೆಲ್ಲರೂ ನಿಮ್ಮಲ್ಲಿ ಹರ್ಷಾನಂದಗೊಳ್ಳಲಿ; ನಿಮ್ಮ ರಕ್ಷಣೆಯನ್ನು ಪ್ರೀತಿಸುವವರು, “ಯೆಹೋವ ದೇವರು ಮಹೋನ್ನತರು,” ಎಂದು ಯಾವಾಗಲೂ ಹೇಳಲಿ.</verse>
				<verse number="17">ನಾನು ಬಡವನೂ ಅಗತ್ಯದಲ್ಲಿರುವವನೂ ಆಗಿದ್ದೇನೆ; ಆದರೂ ಯೆಹೋವ ದೇವರು ನನ್ನ ಹಿತಚಿಂತಕರಾಗಿದ್ದಾರೆ. ನನ್ನ ದೇವರೇ ನೀವೇ ನನ್ನ ಸಹಾಯವೂ ನನ್ನ ವಿಮೋಚಕರೂ ಆಗಿದ್ದೀರಿ, ನೀವು ತಡಮಾಡಬೇಡಿರಿ.</verse>
			</chapter>
			<chapter number="41">
				<verse number="1">ಬಡವರನ್ನು ಪರಾಮರಿಸುವವರು ಧನ್ಯರು; ಕೇಡಿನ ಸಮಯದಲ್ಲಿ ಯೆಹೋವ ದೇವರು ಅವರನ್ನು ತಪ್ಪಿಸುವರು.</verse>
				<verse number="2">ಯೆಹೋವ ದೇವರು ಅವರನ್ನು ಕಾಪಾಡಿ ಸುರಕ್ಷಿತವಾಗಿಡುವರು; ಅವರು ಭೂಮಿಯಲ್ಲಿ ಧನ್ಯರಾಗಿರುವರು; ದೇವರು ಅವರ ಶತ್ರುಗಳ ಇಚ್ಛೆಗೆ ಅವರನ್ನು ಒಪ್ಪಿಸಿಕೊಡರು.</verse>
				<verse number="3">ಬಡವರನ್ನು ಪರಾಮರಿಸುವವರನ್ನು ಯೆಹೋವ ದೇವರು ವ್ಯಾಧಿಯ ಮಂಚದಲ್ಲಿ ಬಲಪಡಿಸುವರು; ಅವರ ಅಸ್ವಸ್ಥತೆಯನ್ನು ಯೆಹೋವ ದೇವರು ಹೋಗಲಾಡಿಸಿ ಮರುಸ್ಥಾಪಿಸುವರು.</verse>
				<verse number="4">“ಯೆಹೋವ ದೇವರೇ, ನನಗೆ ಕರುಣೆ ತೋರಿಸಿ ನನ್ನನ್ನು ಸ್ವಸ್ಥಮಾಡಿರಿ, ಏಕೆಂದರೆ ನಿಮಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದು ನಾನು ಹೇಳಿ ಬೇಡುವೆನು.</verse>
				<verse number="5">“ಅವನು ಸತ್ತು ಅವನ ಹೆಸರು ನಾಶವಾಗುವುದು ಯಾವಾಗ?” ಎಂದು ನನ್ನ ಶತ್ರುಗಳು ನನ್ನ ಕೇಡನ್ನು ಬಯಸಿ ಮಾತನಾಡುತ್ತಾರೆ.</verse>
				<verse number="6">ನನ್ನನ್ನು ನೋಡುವುದಕ್ಕೆ ಅವರಲ್ಲಿ ಒಬ್ಬನು ಬಂದರೆ, ಕಪಟವಾಗಿ ಮಾತನಾಡುತ್ತಾನೆ. ಅವನ ಹೃದಯ ಕೇಡನ್ನು ಕೂಡಿಟ್ಟುಕೊಳ್ಳುತ್ತಿದೆ. ಅವನು ಹೊರಗೆ ಹೋದ ಮೇಲೆ ಕೇಡನ್ನು ಹಬ್ಬಿಸುತ್ತಾನೆ.</verse>
				<verse number="7">ನನ್ನ ಶತ್ರುಗಳೆಲ್ಲರೂ ಸೇರಿ ನನ್ನ ಮೇಲೆ ಪಿಸುಗುಟ್ಟುತ್ತಾರೆ; ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತಾರೆ.</verse>
				<verse number="8">“ಕೆಟ್ಟ ರೋಗವು ಅವನನ್ನು ಹಿಡಿದಿದೆ, ಈಗ ಅವನು ಹಾಸಿಗೆ ಹಿಡಿದಿದ್ದಾನೆ ಎಂದಿಗೂ ಏಳುವುದಿಲ್ಲ,” ಎಂದು ಹೇಳಿಕೊಳ್ಳುತ್ತಾರೆ.</verse>
				<verse number="9">ನನ್ನ ರೊಟ್ಟಿಯನ್ನು ತಿಂದವನೂ ನಾನು ನಂಬಿದ್ದವನೂ ಆಗಿರುವ ನನ್ನ ಆಪ್ತ ಸ್ನೇಹಿತನು ಸಹ ನನಗೆ ವಿರೋಧವಾಗಿ ತನ್ನ ಕಾಲನ್ನು ಎತ್ತಿದ್ದಾನೆ.</verse>
				<verse number="10">ಆದರೆ ಯೆಹೋವ ದೇವರೇ, ನೀವು ನನ್ನನ್ನು ಕರುಣಿಸಿ ನಾನು ಏಳುವಂತೆ ಮಾಡಿರಿ. ನಾನು ಅವರಿಗೆ ಮುಯ್ಯಿಗೆ ಮುಯ್ಯಿತೀರಿಸುವೆನು.</verse>
				<verse number="11">ನನ್ನ ಶತ್ರು ನನ್ನ ಮೇಲೆ ಜಯ ಹೊಂದದೆ ಇರುವುದರಿಂದಲೇ, ನೀವು ನನ್ನನ್ನು ಮೆಚ್ಚಿದ್ದೀರಿ ಎಂದು ನಾನು ತಿಳಿದುಕೊಳ್ಳುವೆ.</verse>
				<verse number="12">ಆದರೆ ನೀವು ನನ್ನ ಪ್ರಾಮಾಣಿಕತೆಯ ಕಾರಣ ನನ್ನನ್ನು ಎತ್ತಿ ಹಿಡಿದಿರುವಿರಿ; ನೀವು ನನ್ನನ್ನು ನಿತ್ಯವಾಗಿ ನಿಮ್ಮ ಸಮ್ಮುಖದಲ್ಲಿ ಇರಿಸುವಿರಿ.</verse>
				<verse number="13">ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರಿಗೆ, ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಆಮೆನ್.</verse>
			</chapter>
			<chapter number="42">
				<verse number="1">ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವುದೋ, ಹಾಗೆಯೇ ನನ್ನ ಪ್ರಾಣವು ನಿಮ್ಮನ್ನು ಬಯಸುತ್ತದೆ.</verse>
				<verse number="2">ದೇವರಿಗೋಸ್ಕರ ಹೌದು ಜೀವವುಳ್ಳ ದೇವರಿಗೋಸ್ಕರ ನನ್ನ ಪ್ರಾಣವು ದಾಹಗೊಳ್ಳುತ್ತದೆ. ನಾನು ಯಾವಾಗ ಹೋಗಿ ದೇವರ ಮುಂದೆ ಕಾಣಿಸಿಕೊಳ್ಳಲಿ?</verse>
				<verse number="3">“ನಿನ್ನ ದೇವರು ಎಲ್ಲಿ?” ಎಂದು ಜನರು, ದಿನವೆಲ್ಲಾ ನನ್ನನ್ನು ಕೇಳುವುದರಿಂದ ಹಗಲುರಾತ್ರಿ ನನ್ನ ಕಣ್ಣೀರೇ ನನಗೆ ಆಹಾರವಾಗಿದೆ.</verse>
				<verse number="4">ಜನಸಮೂಹದೊಂದಿಗೆ ನಾನು ಉತ್ಸಾಹದಿಂದಲೂ ಸ್ತೋತ್ರದಿಂದಲೂ ಹಬ್ಬವನ್ನಾಚರಿಸಲು ದೇವರ ಆಲಯಕ್ಕೆ ಹೋಗಿದ್ದನ್ನು ನೆನಪಿಸಿಕೊಳ್ಳುತ್ತಾ ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.</verse>
				<verse number="5">ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು.</verse>
				<verse number="6">ನನ್ನ ದೇವರೇ, ನನ್ನ ಪ್ರಾಣವು ನನ್ನಲ್ಲಿ ಕುಗ್ಗಿಹೋಗಿದೆ; ಆದ್ದರಿಂದ ಯೊರ್ದನ್ ನಾಡಿನಿಂದಲೂ ಹೆರ್ಮೋನ್ ಬೆಟ್ಟಗಳಿಂದಲೂ ಮಿಸಾರ್ ಬೆಟ್ಟದಿಂದಲೂ ನಿಮ್ಮನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.</verse>
				<verse number="7">ನಿಮ್ಮ ಜಲಪಾತಗಳ ಶಬ್ದವು ಒಂದು ಪ್ರವಾಹವು ಮತ್ತೊಂದು ಪ್ರವಾಹಕ್ಕೆ ಕರೆಯುವಂತಿದೆ. ಅದರಂತೆಯೇ ನಿಮ್ಮ ಎಲ್ಲಾ ಅಲೆಗಳೂ ತೆರೆಗಳೂ ನನ್ನ ಮೇಲೆ ಹಾದು ಹೋದಂತಿವೆ.</verse>
				<verse number="8">ಆದರೂ ಹಗಲಿನಲ್ಲಿ ಯೆಹೋವ ದೇವರು ತಮ್ಮ ಪ್ರೀತಿಯನ್ನು ಆಜ್ಞಾಪಿಸುವರು. ರಾತ್ರಿಯಲ್ಲಿ ದೇವರ ಹಾಡನ್ನು ಹಾಡುವೆನು. ನನ್ನ ಜೀವವಾಗಿರುವ ದೇವರಿಗೆ ನಾನು ಪ್ರಾರ್ಥನೆ ಮಾಡುವೆನು.</verse>
				<verse number="9">“ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದೀರಿ? ಏಕೆ ನಾನು ಶತ್ರುವಿನ ಬಾಧೆಪೀಡಿತನಾಗಿ ದುಃಖದಲ್ಲಿ ಸಾಗಬೇಕು?” ಎಂದು ನನ್ನ ಶರಣನಾದ ದೇವರಿಗೆ ಮೊರೆಯಿಡುವೆನು.</verse>
				<verse number="10">“ನಿನ್ನ ದೇವರು ಎಲ್ಲಿ?” ಎಂದು ದಿನವೆಲ್ಲಾ ನನಗೆ ಹೇಳಿ ನನ್ನ ವೈರಿಗಳು ಅಪಹಾಸ್ಯ ಮಾಡುವುದರಿಂದ ನನ್ನ ಎಲಬುಗಳೆಲ್ಲಾ ಮುರಿದುಹೊದಂತೆ ಇವೆ.</verse>
				<verse number="11">ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು.</verse>
			</chapter>
			<chapter number="43">
				<verse number="1">ದೇವರೇ, ನನ್ನನ್ನು ನಿರ್ದೋಷಿ ಎಂದು ನಿರ್ಣಯಿಸಿರಿ, ಭಕ್ತಿಹೀನ ಜನತೆಯ ವಿರೋಧವಾಗಿ ನನ್ನ ನ್ಯಾಯವನ್ನು ವಾದಿಸಿರಿ. ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸಿರಿ.</verse>
				<verse number="2">ನೀವು ನನ್ನ ದೇವರು, ನನ್ನ ಬಲವಾದ ಕೋಟೆಯು; ನೀವು ಏಕೆ ನನ್ನನ್ನು ತಳ್ಳಿಬಿಟ್ಟಿದ್ದೀರಿ? ಏಕೆ ನಾನು ಶತ್ರುವಿನ ಬಾಧೆಯಿಂದ ದುಃಖದಲ್ಲಿ ನಡೆದುಕೊಳ್ಳಬೇಕು?</verse>
				<verse number="3">ನಿಮ್ಮ ಬೆಳಕನ್ನೂ ನಿಮ್ಮ ಸತ್ಯವನ್ನೂ ಕಳುಹಿಸಿರಿ; ಅವು ನನ್ನನ್ನು ನೀವು ವಾಸಿಸುವ ನಿಮ್ಮ ಪರಿಶುದ್ಧ ಪರ್ವತಕ್ಕೆ ನನ್ನನ್ನು ಬರಮಾಡಲಿ.</verse>
				<verse number="4">ದೇವರೇ, ನನ್ನ ದೇವರೇ, ಆಗ ನಿಮ್ಮ ಬಲಿಪೀಠದ ಬಳಿಗೆ ಬರುವೆನು. ನನ್ನ ಸಂತೋಷವೂ ಹರ್ಷವೂ ಆಗಿರುವ ನಿಮ್ಮ ಬಳಿಗೂ ಬಂದು, ಕಿನ್ನರಿಯಿಂದ ನಿಮ್ಮನ್ನು ಕೊಂಡಾಡುವೆನು.</verse>
				<verse number="5">ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು.</verse>
			</chapter>
			<chapter number="44">
				<verse number="1">ದೇವರೇ, ನಾವು ನಮ್ಮ ಕಿವಿಯಾರೆ ಕೇಳಿದ್ದೇವೆ; ನೀವು ಪೂರ್ವಕಾಲದಲ್ಲಿ ನಮ್ಮ ಪಿತೃಗಳ ದಿವಸಗಳಲ್ಲಿ ಮಾಡಿದ ಕಾರ್ಯವನ್ನು ನಮಗೆ ಅವರು ವಿವರಿಸಿದ್ದಾರೆ.</verse>
				<verse number="2">ನೀವು ನಿಮ್ಮ ಕೈಯಿಂದ ಜನಾಂಗಗಳನ್ನು ಹೊರಡಿಸಿ, ನಮ್ಮ ಪಿತೃಗಳನ್ನು ನೆಲೆಗೊಳಿಸಿದಿರಿ; ನೀವು ವೈರಿಗಳನ್ನು ತೆಗೆದುಹಾಕಿ, ನಮ್ಮ ಪಿತೃಗಳಿಗೆ ಸಮೃದ್ಧಿಯನ್ನುಂಟು ಮಾಡಿದಿರಿ.</verse>
				<verse number="3">ನಮ್ಮ ಪಿತೃಗಳು ತಮ್ಮ ಖಡ್ಗದಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರಿಗೆ ಜಯ ತರಲಿಲ್ಲ; ಆದರೆ ನಿಮ್ಮ ಬಲಗೈಯೂ ನಿಮ್ಮ ತೋಳೂ ನಿಮ್ಮ ಮುಖದ ಪ್ರಕಾಶವೇ ಅವರಿಗೆ ಜಯವನ್ನು ತಂದಿತು. ಏಕೆಂದರೆ ಅವರನ್ನು ನೀವು ಪ್ರೀತಿಸಿದಿರಿ.</verse>
				<verse number="4">ನೀವೇ ನನ್ನ ಅರಸರೂ ದೇವರೂ ಆಗಿದ್ದೀರಿ. ಯಾಕೋಬಿಗೆ ಜಯವನ್ನು ಆಜ್ಞಾಪಿಸುವ ದೇವರಾಗಿದ್ದೀರಿ.</verse>
				<verse number="5">ನಿಮ್ಮಿಂದ ನಮ್ಮ ವೈರಿಗಳನ್ನು ದಬ್ಬುವೆವು; ನಿಮ್ಮ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು.</verse>
				<verse number="6">ನಾನು ನನ್ನ ಬಿಲ್ಲಿನಲ್ಲಿ ಭರವಸೆ ಇಡುವುದಿಲ್ಲ; ನನ್ನ ಖಡ್ಗವು ನನಗೆ ಜಯ ತರುವುದಿಲ್ಲ.</verse>
				<verse number="7">ಆದರೆ ನೀವು ನಮ್ಮ ವೈರಿಗಳ ಮೇಲೆ ನಮಗೆ ಜಯವನ್ನು ಕೊಟ್ಟಿದ್ದೀರಿ. ನೀವು ನಮ್ಮನ್ನು ದ್ವೇಷಿಸುವವರನ್ನು ನಾಚಿಕೆಪಡಿಸಿದಿರಿ.</verse>
				<verse number="8">ದೇವರಲ್ಲಿ ದಿನವೆಲ್ಲಾ ನಾವು ಹಿಗ್ಗುತ್ತಿದ್ದೇವೆ; ನಿಮ್ಮ ಹೆಸರನ್ನು ಯುಗಯುಗಕ್ಕೂ ಕೊಂಡಾಡುವೆವು.</verse>
				<verse number="9">ಆದರೆ ಈಗ ನೀವು ನಮ್ಮನ್ನು ತಳ್ಳಿಬಿಟ್ಟದ್ದರಿಂದ ನಾವು ಕುಗ್ಗಿಹೋಗಿದ್ದೇವೆ. ನಮ್ಮ ಸೈನ್ಯಗಳ ಸಂಗಡ ನೀವು ಹೊರಡಲಿಲ್ಲ.</verse>
				<verse number="10">ವೈರಿಯ ಮುಂದೆ ನಾವು ಓಡಿಹೋಗುವಂತೆ ಮಾಡಿದ್ದೀರಿ. ನಮ್ಮ ವೈರಿಗಳು ನಮ್ಮ ಸೊತ್ತನ್ನು ಕೊಳ್ಳೆ ಹೊಡೆಯುತ್ತಾರೆ.</verse>
				<verse number="11">ಕಡಿಯತಕ್ಕ ಕುರಿಗಳಂತೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀರಿ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀರಿ.</verse>
				<verse number="12">ನಿಮ್ಮ ಜನರನ್ನು ನೀವು ಕ್ರಯವಿಲ್ಲದೆ ಮಾರಿಬಿಟ್ಟಂತಿದೆ. ಆ ಮಾರಾಟದಿಂದ ಲಾಭ ಏನೂ ಇಲ್ಲದಂತಿದೆ.</verse>
				<verse number="13">ನಮ್ಮ ನೆರೆಯವರಿಗೆ ನಾವು ನಿಂದೆಯಾಗಿದ್ದೇವೆ. ನಮ್ಮ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವೂ ಆಗಿದ್ದೇವೆ.</verse>
				<verse number="14">ನಮ್ಮನ್ನು ಇತರ ದೇಶಗಳವರ ಗಾದೆಗೆ ಆಸ್ಪದ ಮಾಡಿರುವಿರಿ; ಅವರು ನಮ್ಮನ್ನು ಪರಿಹಾಸ್ಯದ ವಿಷಯವನ್ನಾಗಿ ಮಾಡಿಕೊಂಡಿದ್ದಾರೆ.</verse>
				<verse number="15">ನಿಂದಕನ ಮತ್ತು ದೂಷಕನ ಮಾತುಗಳಿಗೂ ಮುಯ್ಯಿಗೆ ಮುಯ್ಯಿ ತೀರಿಸುವ ಶತ್ರುವಿನ ನಿಮಿತ್ತವೂ,</verse>
				<verse number="16">ಸದಾ ನನ್ನ ಅವಮಾನವು ನನ್ನ ಮುಂದೆ ಇದೆ; ನನ್ನ ಮುಖವು ನಾಚಿಕೆಯಿಂದ ಮುಚ್ಚಿದೆ.</verse>
				<verse number="17">ಇದೆಲ್ಲಾ ನಮ್ಮ ಮೇಲೆ ಬಂತು; ಆದರೆ ನಾವು ನಿಮ್ಮನ್ನು ಮರೆತುಬಿಡಲಿಲ್ಲ; ನಿಮ್ಮ ಒಡಂಬಡಿಕೆಯನ್ನು ಬಿಡಲಿಲ್ಲ.</verse>
				<verse number="18">ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿಮ್ಮ ಹಾದಿಯಿಂದ ತೊಲಗಲಿಲ್ಲ.</verse>
				<verse number="19">ಆದರೂ ನರಿಗಳ ವಾಸಸ್ಥಳದಂತೆ ನಮ್ಮ ದೇಶವಿದೆ. ಕಾರ್ಗತ್ತಲಿನ ನೆರಳು ನಮ್ಮನ್ನು ಮುಚ್ಚಿಬಿಟ್ಟಂತಿದೆ.</verse>
				<verse number="20">ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದ್ದರೆ,</verse>
				<verse number="21">ದೇವರೇ ಹೃದಯದ ರಹಸ್ಯಗಳನ್ನು ತಿಳಿದಿರುವ ನಿಮಗೆ ಅವೆಲ್ಲವೂ ಮರೆಯಾಗಿರುತ್ತಿರಲಿಲ್ಲ.</verse>
				<verse number="22">ಹೌದು, ನಿಮಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ. ವಧಿಸಲಿಕ್ಕಾಗಿರುವ ಕುರಿಗಳಂತೆ ಜನರು ನಮ್ಮನ್ನು ಎಣಿಸಿದ್ದಾರೆ.</verse>
				<verse number="23">ಯೆಹೋವ ದೇವರೇ, ಏಳಿರಿ, ಹೌದು ಎದ್ದೇಳಿರಿ ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಡಬೇಡಿರಿ.</verse>
				<verse number="24">ಏಕೆ ನಿಮ್ಮ ಮುಖವನ್ನು ಮರೆಮಾಡಿಕೊಂಡಿದ್ದೀರಿ? ನಮ್ಮ ಸಂಕಟ ಬಾಧೆಗಳನ್ನು ಮರೆತುಬಿಡುವಿರಾ?</verse>
				<verse number="25">ನಮ್ಮ ಪ್ರಾಣವು ಮಣ್ಣು ಪಾಲಾದಂತಿದೆ. ನಮ್ಮ ಶರೀರವು ನೆಲ ಪಾಲಾದಂತಿದೆ.</verse>
				<verse number="26">ನಮಗೆ ಸಹಾಯಕರಾಗಿ ಏಳಿರಿ; ನಿಮ್ಮ ಒಡಂಬಡಿಕೆಯ ಪ್ರೀತಿಗಾಗಿ ನಮ್ಮನ್ನು ವಿಮೋಚಿಸಿರಿ.</verse>
			</chapter>
			<chapter number="45">
				<verse number="1">ನನ್ನ ಹೃದಯವು ಸೊಗಸಾದ ವಿಷಯದಿಂದ ಮಿಡಿಯುತ್ತಿದೆ. ಮಹಾರಾಜನನ್ನು ಕುರಿತು ನಾನು ರಚಿಸುವೆನು ಗೀತಾಂಜಲಿ. ನನ್ನ ನಾಲಿಗೆಯು ನಿಪುಣ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.</verse>
				<verse number="2">ನೀವು ಎಲ್ಲಾ ಮನುಷ್ಯರಿಗಿಂತ ಅತಿ ಸುಂದರರಾಗಿದ್ದೀರಿ. ನಿಮ್ಮ ತುಟಿಗಳಲ್ಲಿ ಕೃಪೆಯ ಅಭಿಷೇಕವಿದೆ; ಆದ್ದರಿಂದ ದೇವರು ಎಂದೆಂದಿಗೂ ನಿಮ್ಮನ್ನು ಆಶೀರ್ವದಿಸಿದ್ದಾರೆ.</verse>
				<verse number="3">ಪರಾಕ್ರಮಶಾಲಿಯೇ, ನಿಮ್ಮ ಖಡ್ಗವನ್ನು ಸೊಂಟಕ್ಕೆ ಬಿಗಿದುಕೊಳ್ಳಿರಿ. ನಿಮ್ಮ ಮಹಿಮೆಯನ್ನೂ ಘನತೆಯನ್ನೂ ಧರಿಸಿಕೊಳ್ಳಿರಿ.</verse>
				<verse number="4">ನೀವು ಸತ್ಯತೆ ದೀನತ್ವ ಹಾಗು ನೀತಿಗೋಸ್ಕರ ನಿಮ್ಮ ಘನತೆಯಿಂದ ಜಯದ ಸವಾರಿ ಮಾಡಿರಿ. ನಿಮ್ಮ ಬಲಗೈ ಮಹಾಕೃತ್ಯಗಳನ್ನು ಪ್ರಕಾಶಪಡಿಸಲಿ.</verse>
				<verse number="5">ನಿಮ್ಮ ಹದವಾದ ಬಾಣಗಳು ರಾಜದ್ರೋಹಿಗಳನ್ನು ಇರಿಯಲಿ. ಜನಾಂಗಗಳು ನಿಮ್ಮ ಪಾದಕ್ಕೆ ಬೀಳಲಿ.</verse>
				<verse number="6">ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನ್ಯಾಯದಂಡವೇ ನಿಮ್ಮ ರಾಜದಂಡವಾಗಿದೆ.</verse>
				<verse number="7">ನೀವು ನೀತಿಯನ್ನು ಪ್ರೀತಿಸುತ್ತೀರಿ, ಅನೀತಿಯನ್ನು ದ್ವೇಷಿಸುತ್ತೀರಿ. ಆದ್ದರಿಂದ ದೇವರೇ, ನಿಮ್ಮ ದೇವರು, ನಿಮ್ಮ ಸಂಗಡಿಗರಿಗಿಂತ ನಿಮ್ಮನ್ನು ಉನ್ನತಗೊಳಿಸಿ ಆನಂದ ತೈಲದಿಂದ ಅಭಿಷೇಕಿಸಿದ್ದಾರೆ.</verse>
				<verse number="8">ನಿಮ್ಮ ವಸ್ತ್ರಗಳೆಲ್ಲಾ ರಸಗಂಧವೂ ಅಗರೂ ಚಂದನ ಇವುಗಳ ಸುವಾಸನೆ ಬೀರುತ್ತದೆ. ದಂತದ ಅರಮನೆಯೊಳಗಿಂದ ಉನ್ನತ ವಾದ್ಯಗಳು ನಿಮ್ಮನ್ನು ಆನಂದಗೊಳಿಸುವುದು.</verse>
				<verse number="9">ರಾಜ ಪುತ್ರಿಯರು ನಿಮ್ಮ ಗೌರವ ಸ್ತ್ರೀಯರಲ್ಲಿ ಇದ್ದಾರೆ. ನಿಮ್ಮ ಬಲಗಡೆ ರಾಣಿಯು ಓಫೀರ್ ಬಂಗಾರವನ್ನು ಧರಿಸಿದ್ದಾಳೆ.</verse>
				<verse number="10">ಕೇಳು ಮಗಳೇ, ಇದನ್ನು ಆಲೋಚಿಸಿ, ಕಿವಿಗೊಡು. ನಿಮ್ಮ ಜನರನ್ನೂ, ನಿಮ್ಮ ತಂದೆಯ ಮನೆಯನ್ನೂ ಮರೆತುಬಿಡು.</verse>
				<verse number="11">ನಿನ್ನ ಸೌಂದರ್ಯವನ್ನು ಮಹಾರಾಜರು ಮೆಚ್ಚಲಿ, ಅವರೇ ನಿನ್ನ ಒಡೆಯ ಅವರನ್ನು ಗೌರವಿಸು.</verse>
				<verse number="12">ಟೈರಿನ ಮಗಳು ಕಾಣಿಕೆಯೊಂದಿಗೆ ಬರುವಳು; ಐಶ್ವರ್ಯವಂತರು ನಿನ್ನನ್ನು ವರಿಸಲು ಹುಡುಕಿ ಬರುವರು.</verse>
				<verse number="13">ಅರಸನ ಮಗಳು ತನ್ನ ಅಂತಃಪುರದಲ್ಲಿ ಪೂರ್ಣ ವೈಭವದಿಂದ ಇದ್ದಾಳೆ. ಅವಳ ವಸ್ತ್ರವು ಚಿನ್ನದಿಂದ ನೇಯ್ದಿದೆ.</verse>
				<verse number="14">ಕಸೂತಿ ಉಡುಪುಗಳಲ್ಲಿ ಮಹಾರಾಜರ ಬಳಿಗೆ ಆಕೆಯು ಹೊರಡುತ್ತಾಳೆ, ಅವಳ ಸಂಗಡ ಸಖಿಯರಾದ ಕನ್ಯೆಯರು ಸಹ ಹೊರಡುವರು.</verse>
				<verse number="15">ಸಂತೋಷದಿಂದಲೂ ಉಲ್ಲಾಸದಿಂದಲೂ ಅವರು ಆಕೆಯನ್ನು ತರುತ್ತಿದ್ದಾರೆ. ಹೀಗೆ ಅವರು ರಾಜಭವನದೊಳಗೆ ಪ್ರವೇಶಿಸುವರು.</verse>
				<verse number="16">ನಿಮ್ಮ ಪಿತೃಗಳ ಸ್ಥಳಗಳನ್ನು ನಿಮ್ಮ ಮಕ್ಕಳು ತೆಗೆದುಕೊಳ್ಳುವರು. ಮಹಾರಾಜರು ಅವರನ್ನು ಭೂಮಿಯ ದೇಶದಲ್ಲೆಲ್ಲಾ ರಾಜಪುತ್ರರಾಗಿ ಇರಿಸುವರು.</verse>
				<verse number="17">ತಲತಲಾಂತರವೂ ನಿಮ್ಮ ಹೆಸರನ್ನು ನಾನು ಸ್ಮರಿಸುವಂತೆ ಮಾಡುವೆನು. ಆದ್ದರಿಂದ ಜನರು ಯುಗಯುಗಾಂತರವೂ ನಿಮ್ಮನ್ನು ಹೊಗಳುವರು.</verse>
			</chapter>
			<chapter number="46">
				<verse number="1">ದೇವರು ನಮ್ಮ ಆಶ್ರಯವೂ ಬಲವೂ ಆಗಿದ್ದಾರೆ; ಇಕ್ಕಟ್ಟಿನಲ್ಲಿ ವಿಶೇಷ ಸಹಾಯಕರಾಗಿದ್ದಾರೆ.</verse>
				<verse number="2">ಆದ್ದರಿಂದ ಭೂಮಿಯು ಕಂಪಿಸಿದರೂ ಬೆಟ್ಟಗಳು ಸಮುದ್ರದಲ್ಲಿ ಮುಳುಗಿದರೂ,</verse>
				<verse number="3">ಅದರ ಸಮುದ್ರವು ಘೋಷಿಸಿ ನೊರೆಕಾರಿದರೂ, ಉಬ್ಬರದಿಂದ ಬೆಟ್ಟಗಳು ಅಲ್ಲಾಡಿದರೂ ನಾವು ಭಯಪಡೆವು.</verse>
				<verse number="4">ಒಂದು ನದಿ ಇದೆ; ಅದರ ಕಾಲುವೆಗಳು ದೇವರು ವಾಸಿಸುವ ಮಹೋನ್ನತ ಪರಿಶುದ್ಧ ಸ್ಥಳವನ್ನೂ ಸಂತೋಷಪಡಿಸುತ್ತವೆ.</verse>
				<verse number="5">ದೇವರು ಅದರ ಮಧ್ಯದಲ್ಲಿ ಇದ್ದಾರೆ, ಅದು ಕದಲದು; ದೇವರು ಉದಯಕಾಲದಲ್ಲಿ ಅದಕ್ಕೆ ಸಹಾಯ ಮಾಡುವರು.</verse>
				<verse number="6">ರಾಷ್ಟ್ರಗಳು ಕೋಲಾಹಲದಲ್ಲಿವೆ ರಾಜ್ಯಗಳು ಬೀಳುತ್ತವೆ. ದೇವರು ತಮ್ಮ ಧ್ವನಿಯನ್ನೆತ್ತಲು ಭೂಮಿಯು ಕರಗುತ್ತದೆ.</verse>
				<verse number="7">ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ. ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.</verse>
				<verse number="8">ಬನ್ನಿರಿ, ಯೆಹೋವ ದೇವರ ಕಾರ್ಯಗಳನ್ನು ನೋಡಿರಿ. ಅವರು ಭೂಮಿಯಲ್ಲಿ ಎಂಥಾ ಅತಿಶಯಗಳನ್ನು ಉಂಟುಮಾಡಿದ್ದಾರೆ.</verse>
				<verse number="9">ದೇವರು ಯುದ್ಧಗಳನ್ನು ಭೂಮಿಯ ಅಂತ್ಯದವರೆಗೆ ನಿಲ್ಲಿಸುತ್ತಾರೆ. ಬಿಲ್ಲನ್ನೂ ಭಲ್ಲೆಯನ್ನೂ ಮುರಿದು ಹಾಕಿದ್ದಾರೆ. ರಥಗಳನ್ನು ಬೆಂಕಿಯಿಂದ ಸುಡುತ್ತಾರೆ.</verse>
				<verse number="10">“ಶಾಂತವಾಗಿರಿ, ನಾನೇ ದೇವರಾಗಿದ್ದೇನೆಂದು ತಿಳಿದುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ಉನ್ನತನಾಗಿರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="11">ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ; ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.</verse>
			</chapter>
			<chapter number="47">
				<verse number="1">ಎಲ್ಲಾ ಜನರೇ, ಕೈ ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ.</verse>
				<verse number="2">ಏಕೆಂದರೆ ಮಹೋನ್ನತರಾದ ಯೆಹೋವ ದೇವರು ಭಯಭಕ್ತಿಗೆ ಪಾತ್ರರೂ ಭೂಮಿಯ ಮೇಲೆಲ್ಲಾ ಮಹಾರಾಜರೂ ಆಗಿದ್ದಾರೆ.</verse>
				<verse number="3">ಜನರನ್ನು ನಮ್ಮ ಕೆಳಗೆ ತಂದಿದ್ದಾರೆ. ಜನಾಂಗಗಳನ್ನು ನಮಗೆ ಅಧೀನಮಾಡಿದ್ದಾರೆ.</verse>
				<verse number="4">ಅವರು ಪ್ರೀತಿಸುವ ಯಾಕೋಬಿನ ಘನತೆಯಾಗಿರುವ ನಮ್ಮ ಬಾಧ್ಯತೆಯನ್ನು ನಮಗಾಗಿ ಆಯ್ದುಕೊಂಡಿದ್ದಾರೆ.</verse>
				<verse number="5">ದೇವರು ಜಯಘೋಷದಿಂದ ಉನ್ನತರಾಗಿದ್ದಾರೆ. ಯೆಹೋವ ದೇವರು ತುತೂರಿಯ ಧ್ವನಿಯೊಡನೆ ಸಾಗಿದ್ದಾರೆ.</verse>
				<verse number="6">ದೇವರಿಗೆ ಸ್ತುತಿಯನ್ನು ಹಾಡಿರಿ, ಸ್ತುತಿಯನ್ನು ಹಾಡಿರಿ; ನಮ್ಮ ರಾಜರಿಗೆ ಸ್ತುತಿಯನ್ನು ಹಾಡಿರಿ, ಸ್ತುತಿಯನ್ನು ಹಾಡಿರಿ.</verse>
				<verse number="7">ಏಕೆಂದರೆ, ದೇವರು ಭೂಮಿಗೆಲ್ಲಾ ಮಹಾರಾಜರು. ದೇವರನ್ನು ಸ್ತೋತ್ರದ ಕೀರ್ತನೆಯಿಂದ ಕೀರ್ತಿಸಿರಿ.</verse>
				<verse number="8">ದೇವರು ಜನಾಂಗಗಳನ್ನು ಆಳುತ್ತಾರೆ. ದೇವರು ತಮ್ಮ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾರೆ.</verse>
				<verse number="9">ರಾಷ್ಟ್ರಗಳ ಅಧಿಪತಿಗಳು ಅಬ್ರಹಾಮನ ದೇವರ ಜನರಾಗಿ ಕೂಡಿಬಂದಿದ್ದಾರೆ. ಏಕೆಂದರೆ, ಭೂಮಿಯ ರಾಜರೆಲ್ಲರೂ ದೇವರಿಗೆ ಸೇರಿದವರು. ದೇವರು ಬಹಳವಾಗಿ ಘನ ಹೊಂದಿದ್ದಾರೆ.</verse>
			</chapter>
			<chapter number="48">
				<verse number="1">ಯೆಹೋವ ದೇವರು ಮಹೋನ್ನತರೂ ನಮ್ಮ ದೇವರು ತಮ್ಮ ಪರಿಶುದ್ಧ ಪರ್ವತ ಪಟ್ಟಣದಲ್ಲಿ ಬಹಳವಾಗಿ ಸ್ತುತಿಗೆ ಪಾತ್ರರಾಗಿದ್ದಾರೆ.</verse>
				<verse number="2">ಉತ್ತರ ದಿಕ್ಕಿನಲ್ಲಿರುವ ಮಹಾರಾಜರ ಪಟ್ಟಣವಾದ ಚೀಯೋನ್ ಪರ್ವತವು ಸುಂದರವಾಗಿ ಚಾಪೋನಿನ ಶಿಖರದಂತೆ ಇಡೀ ಭೂಮಿಗೆ ಸಂತೋಷಕರವಾದದ್ದಾಗಿದೆ.</verse>
				<verse number="3">ದೇವರು ಅದರ ಅರಮನೆಗಳಲ್ಲಿ ವಾಸಿಸುತ್ತಾರೆ. ದೇವರು ತಾವೇ ಅದರ ಭದ್ರಕೋಟೆಯಾಗಿದ್ದಾರೆ.</verse>
				<verse number="4">ಏಕೆಂದರೆ, ಇಗೋ, ಅರಸರು ಕೂಡಿಬಂದರು. ಅವರು ಒಟ್ಟಾಗಿ ದಾಳಿಮಾಡಲು ಬಂದರು.</verse>
				<verse number="5">ಅವರು ಪಟ್ಟಣವನ್ನು ಕಂಡು, ಬೆರಗಾದರು. ಅವರು ಭಯಪಟ್ಟು ಓಡಿಹೋದರು.</verse>
				<verse number="6">ಅಲ್ಲಿ ನಡುಕವವೂ ಹೆರುವವಳ ಹಾಗೆ ನೋವೂ ಅವರನ್ನು ಹಿಡಿಯಿತು.</verse>
				<verse number="7">ಪೂರ್ವದಿಕ್ಕಿನ ಗಾಳಿಯಿಂದ ತಾರ್ಷೀಷ್ ಹಡಗುಗಳನ್ನು ನೀವು ಒಡೆಯುತ್ತೀರಲ್ಲಾ.</verse>
				<verse number="8">ನಾವು ಹೇಗೆ ಕೇಳಿದೆವೋ ಹಾಗೆಯೇ ಕಣ್ಣಾರೆ ಕಂಡೆವು, ಸೇನಾಧೀಶ್ವರ ಯೆಹೋವ ದೇವರ ಪಟ್ಟಣವಾಗಿರುವ, ನಮ್ಮ ದೇವರ ಪಟ್ಟಣದಲ್ಲಿ ಇದನ್ನು ಕಂಡೆವು: ದೇವರು ಪಟ್ಟಣವನ್ನು ಎಂದೆಂದಿಗೂ ಸ್ಥಿರಪಡಿಸುವರು.</verse>
				<verse number="9">ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯನ್ನು ನಿಮ್ಮ ಮಂದಿರದಲ್ಲಿ ನಾವು ಸ್ಮರಿಸುತ್ತೇವೆ.</verse>
				<verse number="10">ದೇವರೇ, ನಿಮ್ಮ ಹೆಸರಿಗೆ ತಕ್ಕಂತೆಯೇ ನಿಮ್ಮ ಸ್ತೋತ್ರವು ಭೂಮಿಯ ಕಟ್ಟಕಡೆಯವರೆಗೂ ಇದೆ; ನಿಮ್ಮ ಬಲಗೈ ನೀತಿಯಿಂದ ತುಂಬಿದೆ.</verse>
				<verse number="11">ನಿಮ್ಮ ನ್ಯಾಯ ನಿರ್ಣಯಗಳ ನಿಮಿತ್ತ ಚೀಯೋನ್ ಪರ್ವತವು ಸಂತೋಷಪಡಲಿ; ಯೆಹೂದ ಪುತ್ರಿಯರು ಉಲ್ಲಾಸಪಡಲಿ.</verse>
				<verse number="12">ಚೀಯೋನನ್ನು ಸುತ್ತಿ ಅದರ ಸುತ್ತಲೂ ತಿರುಗಾಡಿ ಅದರ ಗೋಪುರಗಳನ್ನು ಎಣಿಸಿರಿ.</verse>
				<verse number="13">ಮುಂದಿನ ತಲಾಂತರಕ್ಕೆ ತಿಳಿಸುವುದಕ್ಕೋಸ್ಕರ ಅದರ ಗೋಪುರಗಳನ್ನು ಕಣ್ಣಿಟ್ಟು ನೋಡಿರಿ, ಅದರ ಅರಮನೆಗಳನ್ನು ಲಕ್ಷಿಸಿರಿ.</verse>
				<verse number="14">ಏಕೆಂದರೆ, ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವರಾಗಿದ್ದಾರೆ; ಅವರು ಅಂತ್ಯದವರೆಗೂ ನಮ್ಮ ಮಾರ್ಗದರ್ಶಿಯಾಗಿರುವರು.</verse>
			</chapter>
			<chapter number="49">
				<verse number="1">ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳೇ,</verse>
				<verse number="2">ಸಾಮಾನ್ಯರೇ, ಉನ್ನತರೇ, ಐಶ್ವರ್ಯವಂತರೇ, ಬಡವರೇ ಎಲ್ಲರೂ ಕಿವಿಗೊಡಿರಿ.</verse>
				<verse number="3">ನನ್ನ ಬಾಯಿ ಜ್ಞಾನವನ್ನು ನುಡಿಯುವುದು, ನನ್ನ ಹೃದಯದ ಧ್ಯಾನವು ವಿವೇಕವಾಗಿರುವುದು.</verse>
				<verse number="4">ಸಾಮ್ಯಕ್ಕೆ ನನ್ನ ಕಿವಿಗೊಟ್ಟು ಒಗಟನ್ನು ಕಿನ್ನರಿಯಿಂದ ಬಿಚ್ಚುವೆನು.</verse>
				<verse number="5">ಕೇಡಿನ ದಿವಸಗಳಲ್ಲಿ ನನಗೆ ಒಳಸಂಚು ಮಾಡುವವರ ಅಕ್ರಮವು ನನ್ನನ್ನು ಸುತ್ತಿಕೊಳ್ಳುವಾಗ ನಾನು ಏಕೆ ಭಯಪಡಬೇಕು?</verse>
				<verse number="6">ಅವರು ತಮ್ಮ ಸಂಪತ್ತಿನಲ್ಲಿ ಭರವಸೆಯಿಟ್ಟು, ತಮ್ಮ ಅಧಿಕ ಐಶ್ವರ್ಯಗಳಲ್ಲಿ ಜಂಭಪಡುವರು.</verse>
				<verse number="7">ಯಾರೂ ಇನ್ನೊಬ್ಬರ ಜೀವವನ್ನು ವಿಮೋಚಿಸಲಾರರು; ಅಥವಾ ಇತರರಿಗಾಗಿ ಯಾರೂ ದೇವರಿಗೆ ಈಡು ಕೊಡಲಾರರು.</verse>
				<verse number="8">ಆತ್ಮದ ವಿಮೋಚನೆಯು ಬಹು ಬೆಲೆಯುಳ್ಳದ್ದು, ಅದಕ್ಕೆ ಸಾಕಷ್ಟು ಬೆಲೆಯನ್ನು ಕಟ್ಟಲು ಯಾರಿಗೂ ಸಾಧ್ಯವಿಲ್ಲ.</verse>
				<verse number="9">ಮನುಷ್ಯರು ಮರಣ ನಾಶವನ್ನು ಕಾಣದೆ, ಶಾಶ್ವತವಾಗಿ ಬದುಕುವಂತೆ ಮಾಡಲು ಯಾರಿಗೂ ಸಾಧ್ಯವಿಲ್ಲ.</verse>
				<verse number="10">ಏಕೆಂದರೆ, ಜ್ಞಾನಿಗಳು ಸಾಯುವುದನ್ನು ಕಾಣುತ್ತೇವೆ. ಹಾಗೆಯೇ ಮೂರ್ಖರೂ ಜ್ಞಾನಹೀನರೂ ಸಹ ನಾಶವಾಗುತ್ತಾರೆ. ಅವರ ಆಸ್ತಿಯನ್ನು ಇತರರು ಪಡೆಯುತ್ತಾರೆ.</verse>
				<verse number="11">ಜಮೀನುಗಳಿಗೆ ತಮ್ಮ ಹೆಸರುಗಳನ್ನು ಇಟ್ಟುಕೊಳ್ಳುತ್ತಾರೆ. ಆದರೂ ಸಮಾಧಿಯೇ ಅವರಿಗೆ ಶಾಶ್ವತಮಂದಿರವು. ಅದೇ ಅವರ ತಲತಲಾಂತರಕ್ಕೂ ನಿವಾಸಸ್ಥಾನ.</verse>
				<verse number="12">ಮನುಷ್ಯನು ಎಷ್ಟು ಆಸ್ತಿ ಗೌರವ ಸಂಪಾದಿಸಿದ್ದರೂ, ಮಡಿದು ಹೋಗುವ ಪಶುಗಳಿಗೆ ಸಮಾನವಾಗಿದ್ದಾನೆ.</verse>
				<verse number="13">ತಮ್ಮಲ್ಲಿಯೇ ಭರವಸೆ ಇಟ್ಟುಕೊಳ್ಳುವವರಿಗೂ ಇದೇ ಗತಿ. ಅಂಥವರ ಮಾತುಗಳನ್ನು ಒಪ್ಪಿ ಅನುಸರಿಸುವವರ ಗತಿಯೂ ಇದೆ.</verse>
				<verse number="14">ಅವರು ಕುರಿಗಳಂತೆ ಸಾಯಲು ನೇಮಕವಾಗಿದ್ದಾರೆ. ಮರಣವೇ ಅವರ ಕುರುಬ; ಅವರ ವೈಭವ ನಿವಾಸದಿಂದ ದೂರ ಸಮಾಧಿಯಲ್ಲಿರುವುದು ಅವರ ರೂಪ ಕ್ಷಯವಾಗುವುದು. ಆದರೆ ಯಥಾರ್ಥರು ಬೆಳಿಗ್ಗೆ ಅವರನ್ನು ಬಿಟ್ಟು ಸಾಗುತ್ತಿರುವರು.</verse>
				<verse number="15">ಆದರೆ ದೇವರು ನನ್ನ ಪ್ರಾಣವನ್ನು ಮರಣದಿಂದ ವಿಮೋಚನೆ ಮಾಡುವರು. ದೇವರು ನನ್ನನ್ನು ತಮಗಾಗಿ ಅಂಗೀಕರಿಸುವರು.</verse>
				<verse number="16">ಒಬ್ಬನು ಐಶ್ವರ್ಯವಂತನಾದರೆ ಮತ್ತು ಅವನ ಮನೆಯ ಘನತೆ ದೊಡ್ಡದಾದರೆ ಕಳವಳ ಪಡಬೇಡ.</verse>
				<verse number="17">ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗಲಾರನಷ್ಟೆ; ಅವನ ವೈಭವವು ಅವನೊಡನೆ ಹೋಗುವುದಿಲ್ಲ.</verse>
				<verse number="18">ಸಿರಿ ಬಂದಾಗ ಜನರ ಹೊಗಳಿಕೆ ತಪ್ಪದು ಎಂಬಂತೆ ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ, ಜನಸ್ತುತಿಯಿಂದಲೂ ಕೂಡಿದವನಾದರೂ</verse>
				<verse number="19">ಅವನು ತನ್ನ ಪೂರ್ವಿಕರ ಬಳಿಗೆ ಹೋಗುವನು; ಅವರು ಸದಾಕಾಲಕ್ಕೂ ಜೀವ ಬೆಳಕನ್ನು ಕಾಣುವುದಿಲ್ಲ.</verse>
				<verse number="20">ಮನುಷ್ಯನು ಎಷ್ಟು ಘನತೆಯಲ್ಲಿದ್ದು ವಿವೇಕವಿಲ್ಲದವರಾದರೆ ಮಡಿದು ಹೋಗುವ ಪಶುಗಳಿಗೆ ಸಮಾನವಾಗಿದ್ದಾನೆ.</verse>
			</chapter>
			<chapter number="50">
				<verse number="1">ದೇವಾಧಿ ದೇವರಾದ ಯೆಹೋವ ದೇವರು ತಾವೇ ಮಾತನಾಡುತ್ತಿದ್ದಾರೆ, ಸೂರ್ಯೋದಯದಿಂದ ಅಸ್ತಮಾನದವರೆಗೂ ಇರುವ ಭೂಲೋಕದವರು ಕರೆಯುತ್ತಿದ್ದಾರೆ.</verse>
				<verse number="2">ಪರಿಪೂರ್ಣ ಸೌಂದರ್ಯದ ಚೀಯೋನಿನಿಂದ ದೇವರು ಪ್ರಕಾಶಿಸುತ್ತಿದ್ದಾರೆ.</verse>
				<verse number="3">ನಮ್ಮ ದೇವರು ಬರುತ್ತಾರೆ, ಎಷ್ಟು ಮಾತ್ರವೂ ಮೌನವಾಗಿರುವುದಿಲ್ಲ. ಬೆಂಕಿಯು ಅವರ ಮುಂದೆ ಪ್ರಜ್ವಲಿಸುವುದು; ಅವರ ಸುತ್ತಲೂ ದೊಡ್ಡ ಬಿರುಗಾಳಿಯು ಬೀಸುವುದು.</verse>
				<verse number="4">ತಮ್ಮ ಜನರಿಗೆ ನ್ಯಾಯತೀರಿಸುವುದಕ್ಕೆ ಭೂಮಿ ಆಕಾಶಗಳನ್ನೂ ಹೀಗೆಂದು ಕರೆಯುತ್ತಿದ್ದಾರೆ:</verse>
				<verse number="5">“ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.”</verse>
				<verse number="6">ಮತ್ತು ದೇವರು ನ್ಯಾಯಾಧಿಪತಿಯಾಗಿದ್ದಾರೆ. ಆಕಾಶಗಳು ದೇವರ ನೀತಿಯನ್ನು ಪ್ರಕಟಿಸುತ್ತವೆ.</verse>
				<verse number="7">“ನನ್ನ ಜನರೇ, ಕೇಳಿರಿ, ನಾನು ಮಾತನಾಡುತ್ತಿದ್ದೇನೆ, ಇಸ್ರಾಯೇಲೇ, ನಿಮಗೆ ವಿರೋಧವಾಗಿ ಹೀಗೆಂದು ನಾನು ಸಾಕ್ಷಿ ಕೊಡುವೆನು: ನಾನು ದೇವರು, ಹೌದು ನಿಮ್ಮ ದೇವರು ನಾನೇ.</verse>
				<verse number="8">ನಿಮ್ಮ ಯಜ್ಞಗಳ ವಿರೋಧವಾಗಿ ನಾನು ತಪ್ಪು ಹೊರಿಸುತ್ತಾಯಿಲ್ಲ, ಅಥವಾ ನನ್ನ ಮುಂದೆ ಯಾವಾಗಲೂ ಇರುವ ದಹನಬಲಿಗಳ ವಿರೋಧವಾಗಿಯೂ ನಾನು ತಪ್ಪು ಹೊರಿಸುತ್ತಾಯಿಲ್ಲ.</verse>
				<verse number="9">ನಿಮ್ಮ ಮನೆಯಿಂದ ಹೋರಿಯಾಗಲಿ ಕೊಟ್ಟಿಗೆಯಿಂದ ಹೋತಗಳಾಗಲಿ ನನಗೆ ಅವಶ್ಯವಿಲ್ಲ.</verse>
				<verse number="10">ಏಕೆಂದರೆ ಅಡವಿಯ ಮೃಗಗಳೆಲ್ಲವೂ ನನ್ನವೇ. ಸಾವಿರ ಬೆಟ್ಟಗಳಲ್ಲಿರುವ ಪಶುಗಳೂ ಸಹ ನನ್ನವೇ.</verse>
				<verse number="11">ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಬಯಲಿನ ಮೃಗಗಳು ನನ್ನವುಗಳಾಗಿವೆ.</verse>
				<verse number="12">ನನಗೆ ಹಸಿವಾದರೆ ನಿಮಗೆ ಹೇಳಬೇಕಾಗಿಲ್ಲ, ಏಕೆಂದರೆ ಭೂಲೋಕವೂ ಅದರಲ್ಲಿರುವುದೆಲ್ಲವೂ ನನ್ನವೇ.</verse>
				<verse number="13">ಹೋರಿಗಳ ಮಾಂಸವನ್ನು ನಾನು ಭುಜಿಸುವುದಿಲ್ಲ. ಹೋತಗಳ ರಕ್ತವನ್ನು ನಾನು ಕುಡಿಯುವುದಿಲ್ಲ.</verse>
				<verse number="14">“ದೇವರಾಗಿರುವ ನನಗೆ ಸ್ತೋತ್ರವನ್ನು ಬಲಿಯಾಗಿ ಅರ್ಪಿಸಿರಿ. ಮಹೋನ್ನತನಾಗಿರುವ ನನಗೆ ಹರಕೆಗಳನ್ನು ಸಲ್ಲಿಸಿರಿ.</verse>
				<verse number="15">ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆಯಿರಿ, ನಾನು ನಿಮ್ಮನ್ನು ಬಿಡಿಸುವೆನು, ನೀವು ನನ್ನನ್ನು ಘನಪಡಿಸುವಿರಿ.”</verse>
				<verse number="16">ಆದರೆ ದುಷ್ಟನಿಗೆ ದೇವರು ಹೇಳುವುದೇನೆಂದರೆ: “ನನ್ನ ನಿಯಮಗಳನ್ನು ಪಠಿಸುವುದಕ್ಕೆ ಹಕ್ಕು ನಿಮಗೆ ಏನಿದೆ? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಛರಿಸುವುದೇಕೆ?</verse>
				<verse number="17">ನೀನು ನನ್ನ ಶಿಕ್ಷಣವನ್ನು ದ್ವೇಷಿಸಿ, ನನ್ನ ವಾಕ್ಯಗಳನ್ನು ನಿಮ್ಮ ಹಿಂದೆ ಬಿಸಾಡಿಬಿಟ್ಟೀರಲ್ಲಾ.</verse>
				<verse number="18">ಕಳ್ಳನನ್ನು ಕಂಡರೆ ಅವನೊಂದಿಗೆ ಸೇರಿಕೊಳ್ಳುತ್ತೀರಿ. ವ್ಯಭಿಚಾರಿಗಳ ಸಂಗಡ ನಿಮಗೆ ಪಾಲು ಇದೆ.</verse>
				<verse number="19">ನೀವು ನಿಮ್ಮ ಬಾಯನ್ನು ಕೇಡಿಗೆ ಉಪಯೋಗಿಸುತ್ತೀರಿ. ನಿಮ್ಮ ನಾಲಿಗೆಯು ಮೋಸವನ್ನು ಜೋಡಿಸುತ್ತದೆ.</verse>
				<verse number="20">ನೀವು ಕುಳಿತುಕೊಂಡು ನಿಮ್ಮ ಸಹೋದರರಿಗೆ ವಿರೋಧವಾಗಿ ಸುಳ್ಳಾಡುತ್ತೀರಿ. ನಿಮ್ಮ ಒಡಹುಟ್ಟಿದವರ ಮೇಲೆ ಚಾಡಿ ಹೇಳುತ್ತೀರಿ.</verse>
				<verse number="21">ಇವುಗಳನ್ನೆಲ್ಲಾ ನೀವು ಮಾಡಿದ್ದೀರಿ, ಆದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ಸಹ ನಿಮ್ಮ ಹಾಗೆ ಒಬ್ಬನೆಂದು ನೀವು ನೆನಸಿಕೊಂಡಿದ್ದೀರಿ. ಆದರೆ ಈಗ ನಾನು ನಿಮ್ಮನ್ನು ಗದರಿಸಿ ನಿಮ್ಮ ಕಣ್ಣು ಮುಂದೆಯೇ ನಿಮ್ಮ ಅಪರಾಧ ಪ್ರಕಟಿಸುವೆನು.</verse>
				<verse number="22">“ದೇವರನ್ನು ಮರೆತು ಬಿಡುವವರೇ, ಇದನ್ನು ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ. ಇಲ್ಲವಾದರೆ ಎಚ್ಚರಿಕೆಯಾಗಿರಿ. ನನ್ನ ಕೈಯಿಂದ ಬಿಡಿಸುವವರು ಯಾರೂ ಇರುವುದಿಲ್ಲವೆಂಬುದನ್ನು ಗ್ರಹಿಸಿಕೊಳ್ಳಿರಿ.</verse>
				<verse number="23">ಯಾರು ಧನ್ಯವಾದದ ಬಲಿಯನ್ನು ಅರ್ಪಿಸುವರೋ ಅವರೇ ನನ್ನನ್ನು ಘನಪಡಿಸುವರು. ತಮ್ಮ ನಡವಳಿಕೆಯನ್ನು ಕ್ರಮಪಡಿಸಿಕೊಳ್ಳುವವರಿಗೆ ನನ್ನ ರಕ್ಷಣೆಯನ್ನು ತೋರಿಸುವೆನು.”</verse>
			</chapter>
			<chapter number="51">
				<verse number="1">ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ ನನ್ನನ್ನು ಕರುಣಿಸಿರಿ. ನಿಮ್ಮ ಮಹಾ ಅನುಕಂಪಕ್ಕೆ ಅನುಸಾರವಾಗಿ ನನ್ನ ಅತಿಕ್ರಮಗಳನ್ನು ಅಳಿಸಿಬಿಡಿರಿ.</verse>
				<verse number="2">ನನ್ನ ಎಲ್ಲಾ ಅಪರಾಧಗಳಿಂದ ನನ್ನನ್ನು ತೊಳೆದುಬಿಡಿರಿ; ನನ್ನ ಪಾಪದಿಂದ ನನ್ನನ್ನು ಶುದ್ಧಮಾಡಿರಿ.</verse>
				<verse number="3">ನನ್ನ ಅತಿಕ್ರಮಗಳನ್ನು ನಾನೇ ತಿಳಿದಿದ್ದೇನೆ, ನನ್ನ ಪಾಪವು ಯಾವಾಗಲೂ ನನ್ನ ಕಣ್ಮುಂದೆಯೇ ಇದೆ.</verse>
				<verse number="4">ನಿಮಗೇ ನಿಮಗೊಬ್ಬರಿಗೆ ಮಾತ್ರ ವಿರೋಧವಾಗಿ ನಾನು ಪಾಪಮಾಡಿ, ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದ್ದನ್ನೇ ಮಾಡಿದ್ದೇನೆ. ಹೀಗೆ ನೀವು ನ್ಯಾಯತೀರಿಸುವಾಗ ನೀತಿವಂತರಾಗಿಯೂ ನೀವು ತೀರ್ಪು ನಿರ್ಣಯಿಸುವಾಗ ನ್ಯಾಯವಂತರಾಗಿಯೂ ಇರುವಿರಿ.</verse>
				<verse number="5">ಹುಟ್ಟಿದಂದಿನಿಂದಲೇ ನಾನು ಪಾಪಿ. ನನ್ನ ತಾಯಿ ನನ್ನನ್ನು ಗರ್ಭಧರಿಸಿದಾಗಲೇ ನಾನು ಪಾಪಿಯೇ.</verse>
				<verse number="6">ಆದರೂ ಅಂತರಂಗದಲ್ಲಿ ನೀವು ಯಥಾರ್ಥವನ್ನು ಬಯಸುತ್ತೀರಿ. ನೀವು ಹೃದಯದ ಆಂತರ್ಯದಲ್ಲಿ ನನಗೆ ಜ್ಞಾನವನ್ನು ಬೋಧಿಸಿದ್ದೀರಿ.</verse>
				<verse number="7">ಹಿಸ್ಸೋಪಿನಿಂದ ನನ್ನನ್ನು ಶುಚಿಮಾಡಿರಿ, ಆಗ ನಾನು ಶುದ್ಧನಾಗುವೆನು. ನನ್ನನ್ನು ತೊಳೆಯಿರಿ, ಆಗ ಹಿಮಕ್ಕಿಂತ ಬೆಳ್ಳಗಾಗುವೆನು.</verse>
				<verse number="8">ನಾನು ಆನಂದವನ್ನೂ ಹರ್ಷವನ್ನೂ ಕೇಳುವಂತೆ ಮಾಡಿರಿ; ನೀವು ಜಜ್ಜಿದ ಎಲುಬುಗಳು ಆನಂದಪಡಲಿ.</verse>
				<verse number="9">ನನ್ನ ಪಾಪಗಳಿಗೆ ನಿಮ್ಮ ಮುಖವನ್ನು ಮರೆಮಾಡಿಕೊಳ್ಳಿರಿ; ನನ್ನ ಅಧರ್ಮಗಳನ್ನೆಲ್ಲಾ ಅಳಿಸಿಬಿಡಿರಿ.</verse>
				<verse number="10">ಓ ದೇವರೇ, ಶುದ್ಧ ಹೃದಯವನ್ನು ನನ್ನಲ್ಲಿ ಸೃಷ್ಟಿಮಾಡಿರಿ, ಸ್ಥಿರವಾದ ಆತ್ಮವನ್ನು ನನ್ನಲ್ಲಿ ನವೀಕರಿಸಿರಿ.</verse>
				<verse number="11">ನಿಮ್ಮ ಸನ್ನಿಧಿಯಿಂದ ನನ್ನನ್ನು ಹೊರ ದೂಡಬೇಡಿರಿ; ನಿಮ್ಮ ಪರಿಶುದ್ಧಾತ್ಮರನ್ನು ನನ್ನಿಂದ ತೆಗೆಯಬೇಡಿರಿ.</verse>
				<verse number="12">ನಿಮ್ಮ ರಕ್ಷಣೆಯ ಆನಂದವನ್ನು ನನಗೆ ಪುನಃ ಸ್ಥಾಪಿಸಿರಿ; ನನಗೆ ಸಿದ್ಧ ಆತ್ಮವನ್ನು ನೀಡಿ, ನನ್ನನ್ನು ಬೆಂಬಲಿಸಿರಿ.</verse>
				<verse number="13">ಆಗ ನಾನು ಅತಿಕ್ರಮಿಸಿದವರಿಗೆ ನಿಮ್ಮ ಮಾರ್ಗಗಳನ್ನು ಬೋಧಿಸುವೆನು; ಮತ್ತು ಪಾಪಿಗಳು ನಿಮ್ಮ ಕಡೆಗೆ ತಿರುಗಿಕೊಳ್ಳುವರು.</verse>
				<verse number="14">ದೇವರೇ, ನನ್ನ ರಕ್ಷಣೆಯ ದೇವರೇ, ರಕ್ತಾಪರಾಧದಿಂದ ನನ್ನನ್ನು ಬಿಡಿಸಿರಿ, ನನ್ನ ನಾಲಿಗೆಯು ನಿಮ್ಮ ನೀತಿಯನ್ನು ಹಾಡುವುದು.</verse>
				<verse number="15">ಕರ್ತಾ, ನನ್ನ ತುಟಿಗಳನ್ನು ತೆರೆಯಿರಿ. ಆಗ ನನ್ನ ಬಾಯಿ ನಿಮ್ಮ ಸ್ತೋತ್ರವನ್ನು ಪ್ರಸಿದ್ಧಿ ಮಾಡುವುದು.</verse>
				<verse number="16">ಯಜ್ಞವನ್ನು ನೀವು ಇಷ್ಟಪಡುವುದಿಲ್ಲ, ಇಲ್ಲವಾದರೆ ನಾನು ಅದನ್ನು ತರುತ್ತಿದ್ದೆನು. ದಹನಬಲಿಗಳಲ್ಲಿ ನೀವು ಸಂತೋಷಪಡುವುದಿಲ್ಲ.</verse>
				<verse number="17">ಓ ದೇವರೇ, ನಿಮಗೆ ಇಷ್ಟವಾದ ಯಜ್ಞಗಳು ಮುರಿದ ಆತ್ಮವೇ. ಮುರಿದಂಥ, ಜಜ್ಜಿದಂಥ ಹೃದಯವನ್ನು ದೇವರು ತಿರಸ್ಕರಿಸುವುದಿಲ್ಲ.</verse>
				<verse number="18">ನಿಮ್ಮ ಮೆಚ್ಚುಗೆಯಿಂದ ಚೀಯೋನಿಗೆ ಸಮೃದ್ಧಿಯನ್ನು ನೀಡಿರಿ, ಯೆರೂಸಲೇಮಿನ ಗೋಡೆಗಳನ್ನು ಕಟ್ಟಿರಿ.</verse>
				<verse number="19">ಆಗ ನೀತಿಯ ಯಜ್ಞಗಳಲ್ಲಿಯೂ ಸಂಪೂರ್ಣ ದಹನಬಲಿಗಳಲ್ಲಿಯೂ, ನೀವು ಸಂತೋಷಪಡುವಿರಿ; ಆಗ ನಿಮ್ಮ ಬಲಿಪೀಠದ ಮೇಲೆ ಹೋರಿಗಳನ್ನು ಅರ್ಪಿಸಲಾಗುವುದು.</verse>
			</chapter>
			<chapter number="52">
				<verse number="1">ಬಲಿಷ್ಠನೇ, ನೀನು ಕೆಟ್ಟತನದಲ್ಲಿ ಹೆಚ್ಚಳ ಪಡುವುದೇಕೆ? ದೇವರ ದೃಷ್ಟಿಯಲ್ಲಿ ಅಪಕೀರ್ತಿಯಾದವನೇ, ದೇವರ ಅನಂತ ಕೃಪೆಯು ಯಾವಾಗಲೂ ಇರುವದು.</verse>
				<verse number="2">ಮೋಸ ಮಾಡುವವನೇ, ಹದವಾದ ಕ್ಷೌರ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡನ್ನು ಕಲ್ಪಿಸುತ್ತದೆ.</verse>
				<verse number="3">ಒಳ್ಳೆಯದಕ್ಕಿಂತ ಕೆಟ್ಟದ್ದನ್ನೇ ನೀನು ಪ್ರೀತಿಸುತ್ತಿ. ಸತ್ಯವನಾಡುವುದಕ್ಕಿಂತ ಸುಳ್ಳನ್ನೇ ನೀನು ಮಾತನಾಡುತ್ತಿ.</verse>
				<verse number="4">ಮೋಸದ ನಾಲಿಗೆಯೇ, ನಿನಗೆ ಹಾನಿಕರವಾದ ಮಾತುಗಳೇ ಇಷ್ಟ.</verse>
				<verse number="5">ಆದ್ದರಿಂದ ದೇವರು ನಿಶ್ಚಯವಾಗಿ ನಿನ್ನನ್ನು ನಿತ್ಯ ನಾಶಕ್ಕೆ ತರುವರು. ದೇವರು ನಿನ್ನನ್ನು ನಿನ್ನ ವಾಸಸ್ಥಳದಿಂದ ಕಿತ್ತುಹಾಕುವರು. ಜೀವಿತರ ದೇಶದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವರು.</verse>
				<verse number="6">ನೀತಿವಂತರು ಇದನ್ನು ಕಂಡು ಭಯಪಡುವರು. ಅವರು ನಿನ್ನ ಬಗ್ಗೆ ನಗಾಡಿ ಹೀಗನ್ನುವರು,</verse>
				<verse number="7">“ಇಗೋ, ದೇವರನ್ನು ತನ್ನ ಬಲವನ್ನಾಗಿ ಮಾಡಿಕೊಳ್ಳದೆ, ತನ್ನ ಅಧಿಕ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡು ಇತರರನ್ನು ನಾಶಮಾಡಿದ ಮನುಷ್ಯನು ಇವನೇ!”</verse>
				<verse number="8">ನಾನಾದರೋ ದೇವರ ಆಲಯದಲ್ಲಿರುವ ಅಭಿವರ್ದಿಸುವ ಓಲಿವ್ ಮರದ ಹಾಗೆ ಇರುವೆನು. ದೇವರ ಒಡಂಬಡಿಕೆಯ ಪ್ರೀತಿಯಲ್ಲಿ ಯುಗಯುಗಾಂತರವೂ ಭರವಸವಿಟ್ಟಿರುವೆನು.</verse>
				<verse number="9">ದೇವರೇ ನಿಮ್ಮ ಉಪಕಾರಕ್ಕಾಗಿ ಯಾವಾಗಲೂ ನಿಮ್ಮ ಭಕ್ತರ ಮುಂದೆ ನಿಮ್ಮನ್ನು ಸ್ತುತಿಸುತ್ತಿರುವೆನು. ನಿಮ್ಮ ಹೆಸರು ಒಳ್ಳೆಯದು. ಆದುದರಿಂದ ನಿಮ್ಮ ಹೆಸರನ್ನೇ ನಿರೀಕ್ಷಿಸಿಕೊಂಡಿರುವೆನು.</verse>
			</chapter>
			<chapter number="53">
				<verse number="1">“ದೇವರು ಇಲ್ಲಾ,” ಎಂದು ಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ಅವರು ಕೆಟ್ಟು ಹೋದವರು ಅವರ ಮಾರ್ಗಗಳು ಅಸಹ್ಯಕರ. ಅವರಲ್ಲಿ ಒಳ್ಳೆಯದನ್ನು ಮಾಡುವವರು ಒಬ್ಬರೂ ಇಲ್ಲ.</verse>
				<verse number="2">ದೇವರನ್ನು ಹುಡುಕುವ ಜ್ಞಾನಿಗಳು ಇದ್ದಾರೋ ಎಂದು ನೋಡುವುದಕ್ಕೆ ದೇವರು ಸ್ವರ್ಗದಿಂದ ಮನುಷ್ಯರ ಮೇಲೆ ದೃಷ್ಟಿಸಿದರು.</verse>
				<verse number="3">ಒಳ್ಳೆಯದನ್ನು ಮಾಡುವವರು ಯಾರೂ ಇಲ್ಲ, ಒಬ್ಬರಾದರೂ ಇಲ್ಲ. ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, ಎಲ್ಲರೂ ಕೆಟ್ಟು ಹೋಗಿದ್ದರು.</verse>
				<verse number="4">ದುಷ್ಟತ್ವವನ್ನು ನಡೆಸುವವರಿಗೆ ಏನೂ ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ರೊಟ್ಟಿಯಂತೆ ತಿಂದು ಬಿಡುತ್ತಾರೆಯೋ? ಅವರು ದೇವರನ್ನು ಸ್ಮರಿಸುವುದೇ ಇಲ್ಲ.</verse>
				<verse number="5">ಭಯವಿಲ್ಲದಿರುವಲ್ಲಿ ಅವರು ಭಯಭ್ರಾಂತರಾದರು; ಏಕೆಂದರೆ ನಿಮಗೆ ವಿರೋಧವಾಗಿ ದಂಡು ಇಳಿಸುವವರನ್ನು ದೇವರು ಚದರಿಸಿಬಿಟ್ಟಿದ್ದಾರೆ. ನೀವು ಅವರನ್ನು ನಾಚಿಕೆಪಡಿಸಿದ್ದೀರಿ. ಏಕೆಂದರೆ ದೇವರು ಅವರನ್ನು ತಿರಸ್ಕರಿಸಿದ್ದಾರೆ.</verse>
				<verse number="6">ಓ, ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬಂದರೆ ಎಷ್ಟೋ ಒಳ್ಳೆಯದು! ದೇವರು ತಮ್ಮ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬ್ಯರು ಉಲ್ಲಾಸಗೊಳ್ಳುವರು. ಇಸ್ರಾಯೇಲರು ಸಂತೋಷಿಸುವರು.</verse>
			</chapter>
			<chapter number="54">
				<verse number="1">ದೇವರೇ, ನಿಮ್ಮ ಹೆಸರಿನಿಂದ ನನ್ನನ್ನು ರಕ್ಷಿಸಿರಿ. ನಿಮ್ಮ ಬಲದಿಂದ ನನಗೆ ನ್ಯಾಯತೀರಿಸಿರಿ.</verse>
				<verse number="2">ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ. ನನ್ನ ಬಾಯಿಯ ಮಾತಿಗೆ ಕಿವಿಕೊಡಿರಿ.</verse>
				<verse number="3">ಗರ್ವಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ. ಕ್ರೂರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವದೇ ಇಲ್ಲ.</verse>
				<verse number="4">ನಿಜವಾಗಿಯೂ ದೇವರು ನನ್ನ ಸಹಾಯಕರು. ಯೆಹೋವ ದೇವರು ನನ್ನ ಪ್ರಾಣವನ್ನು ಕಾಪಾಡುವವರು.</verse>
				<verse number="5">ನನ್ನ ಕೆಡುಕನ್ನು ಬಯಸುವವರು ಕೇಡನ್ನು ಅನುಭವಿಸಲಿ. ನಿಮ್ಮ ನಂಬಿಗಸ್ತಿಕೆಯಿಂದ ನೀವು ಅವರನ್ನು ದಂಡಿಸಿರಿ.</verse>
				<verse number="6">ನಾನು ನಿಮಗೆ ಸ್ವಂತ ಇಚ್ಛೆಯಿಂದ ಬಲಿಯನ್ನು ಅರ್ಪಿಸುವೆನು. ಯೆಹೋವ ದೇವರೇ, ನಿಮ್ಮ ಒಳ್ಳೆಯ ಹೆಸರನ್ನು ಕೊಂಡಾಡುವೆನು.</verse>
				<verse number="7">ಏಕೆಂದರೆ ಎಲ್ಲಾ ಇಕ್ಕಟ್ಟಿನಿಂದ ನನ್ನನ್ನು ಬಿಡಿಸಿದ ದೇವರು ನೀವೇ. ನನ್ನ ವೈರಿಗಳ ಮೇಲೆ ಜಯ ಸಾಧಿಸಿದ್ದನ್ನು ನಾನು ನೋಡುವೆನು.</verse>
			</chapter>
			<chapter number="55">
				<verse number="1">ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡಿರಿ, ನನ್ನ ವಿಜ್ಞಾಪನೆಗೆ ನಿಮ್ಮನ್ನು ಮರೆಮಾಡಿಕೊಳ್ಳಬೇಡಿರಿ.</verse>
				<verse number="2">ನನ್ನನ್ನು ಆಲೈಸಿರಿ, ನನಗೆ ಉತ್ತರಕೊಡಿರಿ. ನಾನು ನನ್ನ ಚಿಂತೆಯಿಂದ ದುಃಖಿಸುತ್ತಾ ಬೇಸರವಾಗಿದ್ದೇನೆ.</verse>
				<verse number="3">ಶತ್ರುವಿನ ಗರ್ಜನೆಯಿಂದಲೂ ದುಷ್ಟರ ಬೆದರಿಕೆಯಿಂದಲೂ ನರಳುತ್ತೇನೆ. ಏಕೆಂದರೆ ಅವರು ಅಪರಾಧವನ್ನು ನನ್ನ ಮೇಲೆ ಬರಮಾಡಿ, ಕೋಪದಿಂದ ನನ್ನನ್ನು ಹಗೆ ಮಾಡುತ್ತಾರೆ.</verse>
				<verse number="4">ನನ್ನ ಹೃದಯವು ನನ್ನ ಅಂತರಂಗದಲ್ಲಿ ನೊಂದುಕೊಳ್ಳುತ್ತದೆ. ಮರಣದ ಬೆದರಿಕೆಗಳು ನನ್ನ ಮೇಲೆ ಬಿದ್ದಿವೆ.</verse>
				<verse number="5">ಭಯವೂ ನಡುಗೂ ನನಗೆ ಬಂದಿವೆ; ಭೀತಿಯು ನನ್ನನ್ನು ಮುಚ್ಚಿದೆ.</verse>
				<verse number="6">“ಓ, ಪಾರಿವಾಳದಂತೆ ನನಗೆ ರೆಕ್ಕೆಗಳು ಇರುತ್ತಿದ್ದರೆ, ಹಾರಿಹೋಗಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದೆ.</verse>
				<verse number="7">ನಾನು ದೂರ ಹಾರಿಹೋಗಿ ಮರುಭೂಮಿಯಲ್ಲಿ ವಾಸಿಸುತ್ತಿದ್ದೆ.</verse>
				<verse number="8">ಚಂಡಮಾರುತದಿಂದಲೂ ಬಿರುಗಾಳಿಯಿಂದಲೂ ತಪ್ಪಿಸಿಕೊಳ್ಳುತ್ತಿದ್ದೆ,” ಎಂದುಕೊಂಡೆನು.</verse>
				<verse number="9">ಯೆಹೋವ ದೇವರೇ, ದುಷ್ಟರನ್ನು ಕಳವಳಗೊಳಿಸಿರಿ, ಅವರ ಮಾತುಗಳನ್ನು ನಿಲ್ಲಿಸಿಬಿಡಿರಿ. ಬಲಾತ್ಕಾರವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ಕಾಣುತ್ತಿದ್ದೇನೆ.</verse>
				<verse number="10">ಅವರು ಹಗಲಿರುಳು ಪಟ್ಟಣದ ಗೋಡೆಗಳನ್ನು ಸುತ್ತುತ್ತಾರೆ. ಕೇಡು ಅನಾಚಾರಗಳು ಅದರ ಮಧ್ಯದಲ್ಲಿ ಇವೆ.</verse>
				<verse number="11">ನಾಶಕರ ಶಕ್ತಿಗಳು ನಗರ ಮಧ್ಯದಲ್ಲಿ ಇವೆ. ಬೀದಿಗಳೊಳಗಿಂದ ಬೆದರಿಕೆಯೂ ವಂಚನೆಯೂ ತೊಲಗುವುದಿಲ್ಲ.</verse>
				<verse number="12">ನನ್ನನ್ನು ನಿಂದಿಸುವವನು ಶತ್ರುವಲ್ಲ, ಶತ್ರುವಾದರೆ ತಾಳಿಕೊಳ್ಳುತ್ತಿದ್ದೆ. ನನಗೆ ವಿರೋಧವಾಗಿರುವವನು ನನ್ನ ವೈರಿಯಾಗಿದ್ದರೆ, ಅವನಿಂದ ಅಡಗಿಕೊಳ್ಳುತ್ತಿದ್ದೆನು.</verse>
				<verse number="13">ಆದರೆ ನನ್ನ ಜೊತೆಗಾರನೂ ನನ್ನ ಆಪ್ತನೂ, ನನಗೆ ಸಮನಾದವನೇ ವಿರೋಧವಾಗಿದ್ದಾನೆ.</verse>
				<verse number="14">ದೇವರ ಆಲಯಕ್ಕೆ ಆರಾಧಕರ ಗುಂಪಿನೊಂದಿಗೆ ನಾವಿಬ್ಬರೂ ನಡೆದು ಹೋಗುವಾಗ ಮಧುರ ಅನ್ಯೋನ್ಯತೆಯನ್ನು ಅನುಭವಿಸಿದೆವು.</verse>
				<verse number="15">ಮರಣ ನನ್ನ ವೈರಿಗಳನ್ನು ತಟ್ಟನೆ ಹಿಡಿಯಲಿ. ಜೀವಸಹಿತ ಪಾತಾಳಕ್ಕೆ ಅವರು ಇಳಿಯಲಿ, ಅವರ ಮನೆಯಲ್ಲಿ ದುಷ್ಟತನವು ಇದೆ.</verse>
				<verse number="16">ಆದರೆ ನಾನು ದೇವರನ್ನು ಕರೆಯುವೆನು. ಯೆಹೋವ ದೇವರು ನನ್ನನ್ನು ರಕ್ಷಿಸುವರು.</verse>
				<verse number="17">ಸಂಜೆ, ಮುಂಜಾನೆ, ಮಧ್ಯಾಹ್ನಗಳಲ್ಲಿ ಹಂಬಲಿಸಿ ಮೊರೆಯಿಡುವೆನು. ದೇವರು ನನ್ನ ಧ್ವನಿಯನ್ನು ಕೇಳುವರು.</verse>
				<verse number="18">ಅನೇಕರು ನನ್ನನ್ನು ವಿರೋಧಿಸಿದರೂ ನನಗೆ ವಿರೋಧವಾಗಿ ಆಗುವ ಯುದ್ಧಗಳಲ್ಲಿ ದೇವರು ನನ್ನನ್ನು ಯಾವುದೇ ಹಾನಿಯಾಗದಂತೆ ವಿಮೋಚಿಸುವರು.</verse>
				<verse number="19">ಆದಿಯಿಂದ ಸಿಂಹಾಸನಾರೂಢರಾಗಿರುವ ದೇವರು, ಅವರ ಮೊರೆಯನ್ನು ಕೇಳಿ ಅವರನ್ನು ತಗ್ಗಿಸುವರು, ಏಕೆಂದರೆ, ಅವರು ದೇವರಿಗೆ ಭಯಪಡುವುದಿಲ್ಲ. ದೇವರು ಬದಲಾಗುವುದಿಲ್ಲ.</verse>
				<verse number="20">ನನ್ನ ಜೊತೆಗಾರನು ತನ್ನ ಸ್ನೇಹಿತನ ಮೇಲೆ ದಾಳಿಮಾಡಿದ್ದಾನೆ. ತಾನು ಮಾಡಿದ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.</verse>
				<verse number="21">ಅವನ ಬಾಯಿಯ ಮಾತುಗಳು ಬೆಣ್ಣೆಗಿಂತ ನುಣ್ಣಗಾಗಿವೆ; ಆದರೆ ಅವನ ಹೃದಯದಲ್ಲಿ ಕಾಳಗವಿದೆ; ಅವನ ಮಾತುಗಳು ಎಣ್ಣೆಗಿಂತ ನಯವಾಗಿವೆ; ಆದರೆ ಅವು ಬಿಚ್ಚುಗತ್ತಿಗಳಾಗಿವೆ.</verse>
				<verse number="22">ಯೆಹೋವ ದೇವರ ಮೇಲೆ ನಿಮ್ಮ ಭಾರವನ್ನು ಹಾಕಿರಿ. ಅವರು ನಿಮಗೆ ಆಧಾರವಾಗಿರುವರು. ದೇವರು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸುವುದಿಲ್ಲ.</verse>
				<verse number="23">ಆದರೆ ದೇವರೇ, ದುಷ್ಟರನ್ನು ನಾಶದ ಕುಣಿಯಲ್ಲಿ ಇಳಿಯ ಮಾಡುವಿರಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಕಾಲದಲ್ಲಿ ಅರ್ಧವನ್ನೂ ಜೀವಿಸುವುದಿಲ್ಲ. ನಾನಾದರೋ ನಿಮ್ಮಲ್ಲಿ ಭರವಸವಿಡುತ್ತೇನೆ.</verse>
			</chapter>
			<chapter number="56">
				<verse number="1">ದೇವರೇ ಕರುಣಿಸು, ಏಕೆಂದರೆ ಮನುಷ್ಯರು ನನ್ನನ್ನು ಬೆನ್ನಟ್ಟುತ್ತಿದ್ದಾರೆ. ದಿನವೆಲ್ಲಾ ವಿರೋಧಿಸುತ್ತಾ ನನ್ನನ್ನು ಬಾಧಿಸುತ್ತಿದ್ದಾರೆ.</verse>
				<verse number="2">ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ಬೆನ್ನಟ್ಟುತ್ತಿದ್ದಾರೆ. ಗರ್ವದಿಂದ ನನಗೆ ವಿರೋಧವಾಗಿ ಯುದ್ಧ ಮಾಡುತ್ತಿದ್ದಾರೆ.</verse>
				<verse number="3">ನಾನು ಭಯಪಡುವ ಸಮಯದಲ್ಲಿ ನಿಮ್ಮಲ್ಲಿ ಭರವಸೆ ಇಡುವೆನು.</verse>
				<verse number="4">ದೇವರ ಮಾತುಗಳಲ್ಲಿ ನಾನು ಹೆಮ್ಮೆಪಡುವೆನು. ದೇವರಲ್ಲಿಯೇ ಭರವಸೆ ಇಡುವೆನು, ನಾನು ಭಯಪಡುವುದಿಲ್ಲ. ಸಾಯುವ ಮನುಷ್ಯನು ನನಗೇನು ಮಾಡಬಲ್ಲ?</verse>
				<verse number="5">ಶತ್ರುಗಳು ನನ್ನ ಮಾತುಗಳನ್ನು ಸದಾ ಅಪಾರ್ಥ ಮಾಡಿಕೊಳ್ಳುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ಕೇಡಿಗಾಗಿವೆ.</verse>
				<verse number="6">ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ. ನನ್ನ ಪ್ರಾಣ ತೆಗೆಯಲು ಕುತೂಹಲದಿಂದ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.</verse>
				<verse number="7">ಅಪರಾಧದಿಂದ ಅವರು ತಪ್ಪಿಸಿಕೊಂಡಾರೋ? ದೇವರೇ ಜನರನ್ನು ಕಠಿಣವಾಗಿ ದಂಡಿಸಿರಿ.</verse>
				<verse number="8">ನನ್ನ ಗೋಳಾಟವನ್ನು ಎಣಿಕೆ ಮಾಡಿರಿ, ನಿಮ್ಮ ಸುರುಳಿಯಲ್ಲಿ ನನ್ನ ಕಣ್ಣೀರ ಲೆಕ್ಕಮಾಡಿರಿ, ಅವು ನಿಮ್ಮ ಗ್ರಂಥದಲ್ಲಿ ಬರೆದಿದೆಯಲ್ಲವೇ?</verse>
				<verse number="9">ನಾನು ನಿಮಗೆ ಮೊರೆಯಿಟ್ಟಾಗ, ನನ್ನ ಶತ್ರುಗಳು ಹಿಂದಿರುಗುವರು. ಇದರಿಂದ ದೇವರು ನನಗಿದ್ದಾರೆ ಎಂಬುದನ್ನು ತಿಳಿದುಕೊಳ್ಳುವೆನು.</verse>
				<verse number="10">ನಾನು ದೇವರಲ್ಲಿಯೂ ದೇವರ ವಾಕ್ಯದಲ್ಲಿಯೂ ಹೆಮ್ಮೆಪಡುವೆನು. ಹೌದು, ದೇವರಲ್ಲಿಯೂ ಯೆಹೋವ ದೇವರ ವಾಕ್ಯದಲ್ಲಿಯೂ ಹೆಮ್ಮೆಪಡುವೆನು.</verse>
				<verse number="11">ನಾನು ದೇವರಲ್ಲಿ ಭರವಸೆಯಿಡುವೆನು. ನಾನು ಭಯಪಡುವುದಿಲ್ಲ. ಮಾನವನು ನನಗೇನು ಮಾಡುವನು?</verse>
				<verse number="12">ನನ್ನ ದೇವರೇ ನಾನು ನಿಮಗೆ ಸಲ್ಲಿಸಿದ ಹರಕೆಗಳಿಗೆ ಅಧೀನವಾಗಿದ್ದೇನೆ. ನಾನು ಉಪಕಾರ ಸ್ತುತಿಯ ಕಾಣಿಕೆಗಳನ್ನು ನಿಮಗೆ ಸಲ್ಲಿಸುವೆನು.</verse>
				<verse number="13">ಏಕೆಂದರೆ ನೀವು ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀರಿ. ನಾನು ಜೀವದ ಬೆಳಕಿನಲ್ಲಿ ನಿಮ್ಮ ಮುಂದೆ ನಡೆದುಕೊಳ್ಳುವ ಹಾಗೆ ನೀವು ನನ್ನ ಪಾದಗಳನ್ನು ಎಡವದಂತೆ ಕಾಪಾಡಿದ್ದೀರಿ.</verse>
			</chapter>
			<chapter number="57">
				<verse number="1">ದೇವರೇ ನನ್ನನ್ನು ಕರುಣಿಸಿರಿ, ನನ್ನನ್ನು ಕರುಣಿಸಿರಿ. ನನ್ನ ಪ್ರಾಣವು ನಿಮ್ಮನ್ನು ಆಶ್ರಯಿಸಿಕೊಂಡಿದೆ; ಆಪತ್ತುಗಳು ದಾಟುವವರೆಗೂ ನಿಮ್ಮ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.</verse>
				<verse number="2">ಮಹೋನ್ನತನಾದ ದೇವರಿಗೆ, ಮೊರೆಯಿಡುತ್ತೇನೆ. ನನಗಾಗಿ ಕಾರ್ಯಗಳಿಗೆ ನ್ಯಾಯ ನೀಡುವ ದೇವರಿಗೆ ಮೊರೆಯಿಡುತ್ತೇನೆ.</verse>
				<verse number="3">ದೇವರು ಪರಲೋಕದಿಂದ ಸಹಾಯ ಕಳುಹಿಸಿ, ನನ್ನನ್ನು ನಿಂದಿಸುವವರನ್ನು ದಂಡಿಸಿ, ನನ್ನನ್ನು ರಕ್ಷಿಸುವರು. ದೇವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನೂ ತಮ್ಮ ಸತ್ಯವನ್ನೂ ಕಳುಹಿಸುವರು.</verse>
				<verse number="4">ನಾನು ಸಿಂಹಗಳಂಥವರ ಮಧ್ಯದಲ್ಲಿದ್ದೇನೆ. ಕ್ರೂರಮೃಗಗಳಂಥವರ ಮಧ್ಯದಲ್ಲಿ ಒತ್ತಾಯವಾಗಿ ವಾಸಮಾಡುತ್ತಿದ್ದೇನೆ. ಅವರ ಹಲ್ಲು, ಭಲ್ಲೆ, ಬಾಣಗಳೂ ಅವರ ನಾಲಿಗೆ ಹದವಾದ ಖಡ್ಗವೂ ಆಗಿವೆ.</verse>
				<verse number="5">ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ. ಭೂಮಿಯ ಮೇಲೆಲ್ಲಾ ನಿಮ್ಮ ಮಹಿಮೆಯು ಹರಡಲಿ.</verse>
				<verse number="6">ಶತ್ರುಗಳು ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದಿದ್ದಾರೆ. ಅದರಲ್ಲಿ ತಾವೇ ಬಿದ್ದುಹೋದರು.</verse>
				<verse number="7">ದೇವರೇ, ನನ್ನ ಹೃದಯವು ಸ್ಥಿರವಾಗಿದೆ. ಹೌದು, ನನ್ನ ಹೃದಯವು ಸ್ಥಿರವಾಗಿದೆ. ನಾನು ಸಂಗೀತದೊಡನೆ ಹಾಡುವೆನು.</verse>
				<verse number="8">ಎಚ್ಚರವಾಗು, ನನ್ನ ಪ್ರಾಣವೇ, ವೀಣೆಯೇ, ಕಿನ್ನರಿಯೇ ಎಚ್ಚರವಾಗಿರಿ, ನಾನು ಉದಯಕಾಲವನ್ನು ಎಚ್ಚರಗೊಳಿಸುವೆನು.</verse>
				<verse number="9">ಯೆಹೋವ ದೇವರೇ, ಜನಾಂಗಗಳಲ್ಲಿ ನಾನು ನಿಮ್ಮನ್ನು ಕೊಂಡಾಡುವೆನು. ಜನರ ಮಧ್ಯದಲ್ಲಿ ನಿಮ್ಮನ್ನು ಹಾಡಿ ಕೊಂಡಾಡುವೆನು.</verse>
				<verse number="10">ಆಕಾಶಕ್ಕಿಂತ ನಿಮ್ಮ ಪ್ರೀತಿ ದೊಡ್ಡದು. ಮೇಘವನ್ನು ನಿಲುಕುವಷ್ಟು ನಿಮ್ಮ ಸತ್ಯವು ಉನ್ನತವಾಗಿವೆ.</verse>
				<verse number="11">ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ. ಭೂಮಿಯ ಮೇಲೆಲ್ಲಾ ನಿಮ್ಮ ಮಹಿಮೆಯು ಹರಡಲಿ.</verse>
			</chapter>
			<chapter number="58">
				<verse number="1">ಜನನಾಯಕರೇ, ನೀವು ನ್ಯಾಯವಾಗಿ ತೀರ್ಪನ್ನು ನುಡಿಯುತ್ತೀರೋ? ಜನರಲ್ಲಿ ನೀವು ಯಥಾರ್ಥವಾಗಿ ನ್ಯಾಯತೀರಿಸುವಿರೋ?</verse>
				<verse number="2">ಇಲ್ಲಾ, ನಿಮ್ಮ ಹೃದಯದಲ್ಲಿ ದುಷ್ಟತನವನ್ನು ಕಲ್ಪಿಸುತ್ತೀರಲ್ಲಾ, ದೇಶದಲ್ಲಿ ನಿಮ್ಮ ಕೈಗಳಿಂದ ಹಿಂಸಾಚಾರವನ್ನು ತೂಗುತ್ತೀರಲ್ಲಾ.</verse>
				<verse number="3">ದುಷ್ಟರು ಗರ್ಭದಿಂದಲೇ ದಾರಿತಪ್ಪುತ್ತಾರೆ. ಹುಟ್ಟಿದಂದಿನಿಂದಲೇ ಸುಳ್ಳಾಡುವವರಾಗಿ ತಪ್ಪಿಹೋಗುತ್ತಾರೆ.</verse>
				<verse number="4">ಹಾವಿನ ವಿಷದ ಹಾಗೆ ಅವರಲ್ಲಿ ವಿಷ ಇದೆ. ಘಟಸರ್ಪದ ಹಾಗೆ ಮಂದವಾಗಿದ್ದಾರೆ.</verse>
				<verse number="5">ಚಮತ್ಕಾರದಿಂದ ಆಕರ್ಷಿಸಿ, ಕೌಶಲ್ಯದಿಂದ ನುಡಿಸುವ ಹಾವಾಡಿಗನ ನಾದವನ್ನು ಕೇಳದ ಹಾವಿನಂತೆ ಇದ್ದಾರೆ.</verse>
				<verse number="6">ಓ, ದೇವರೇ, ಅವರ ಹಲ್ಲುಗಳು ಮುರಿದು ಬೀಳಲಿ. ಯೆಹೋವ ದೇವರೇ, ಪ್ರಾಯದ ಸಿಂಹಗಳಂತಿರುವ ಅವರ ಕೋರೆಹಲ್ಲುಗಳು ನಾಶವಾಗಲಿ.</verse>
				<verse number="7">ಅವರು ನೀರಿನಂತೆ ಕರಗಿಹೋಗಲಿ. ಅವರು ತಮ್ಮ ಬಾಣಗಳನ್ನು ಗುರಿಯಿಡುವಾಗ ಡೊಂಕಾಗಿ ಹೋಗಲಿ.</verse>
				<verse number="8">ಕರಗುವ ಗೊಂಡೆ ಹುಳದಂತೆ ಅವರು ನಾಶವಾಗಲಿ. ದಿನತುಂಬದೆ ಹುಟ್ಟಿದ ಶಿಶುವಿನಂತೆ ಅವರು ಸೂರ್ಯನನ್ನು ಕಾಣದಿರಲಿ.</verse>
				<verse number="9">ಗಡಿಗೆಗಳು ಮುಳ್ಳಿನ ಬೆಂಕಿಯ ಶಾಖವನ್ನು ಇನ್ನೂ ಹಸಿಯಾಗಿ ಇಲ್ಲವೆ ಒಣಗಿರುವಾಗಲೇ, ಬಿರುಗಾಳಿ ಹಾರಿಸಿಬಿಡುವಂತೆ ಅವರಿಗೆ ಆಗಲಿ.</verse>
				<verse number="10">ನೀತಿವಂತರು ದುಷ್ಟರಿಗಾಗುವ ಪ್ರತಿದಂಡನೆಯನ್ನು ಕಂಡು ಹಿಗ್ಗಿ ತಮ್ಮ ಪಾದಗಳನ್ನು ದುಷ್ಟನ ರಕ್ತದ ಮೇಲಿಡಲಿ.</verse>
				<verse number="11">ಆಗ ಜನರು ಹೀಗೆ ಹೇಳಿಕೊಳ್ಳುವರು, “ನಿಶ್ಚಯವಾಗಿ ನೀತಿವಂತನಿಗೆ ಫಲವಿದೆ. ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯತೀರಿಸುವ ದೇವರು ಇದ್ದಾರೆ.”</verse>
			</chapter>
			<chapter number="59">
				<verse number="1">ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸಿರಿ. ನನಗೆ ವಿರೋಧವಾಗಿ ಎದ್ದವರಿಂದ ನನ್ನನ್ನು ರಕ್ಷಿಸಿರಿ</verse>
				<verse number="2">ಕೆಡುಕನ್ನು ಮಾಡುವವರಿಂದ ನನ್ನನ್ನು ಬಿಡಿಸಿರಿ. ಕೊಲೆಪಾತಕರಿಂದ ನನ್ನನ್ನು ರಕ್ಷಿಸಿರಿ.</verse>
				<verse number="3">ಇಗೋ, ನನ್ನ ಪ್ರಾಣಕ್ಕೆ ಅವರು ಒಳಸಂಚುಮಾಡುತ್ತಾರೆ. ಕ್ರೂರರು ನನಗೆ ವಿರೋಧವಾಗಿ ಕೂಡಿಕೊಳ್ಳುತ್ತಾರೆ. ಯೆಹೋವ ದೇವರೇ, ನನ್ನಲ್ಲಿ ಅಪರಾಧವಿಲ್ಲ, ನಾನು ಯಾವ ತಪ್ಪೂ ಮಾಡಿಲ್ಲ.</verse>
				<verse number="4">ನನ್ನಲ್ಲಿ ತಪ್ಪು ಇಲ್ಲದಿದ್ದರೂ ಅವರು ಹಾನಿಮಾಡಲು ಸಿದ್ಧರಾಗಿದ್ದಾರೆ. ನನ್ನ ಅವಸ್ಥೆಯನ್ನು ನೋಡಿರಿ, ನನಗೆ ಸಹಾಯ ಮಾಡುವುದಕ್ಕೆ ಸಿದ್ಧರಾಗಿರಿ.</verse>
				<verse number="5">ಸರ್ವಶಕ್ತರಾದ ಯೆಹೋವ ದೇವರೇ, ಇಸ್ರಾಯೇಲರ ದೇವರೇ, ನೀವು ಎಲ್ಲಾ ಜನಾಂಗಗಳನ್ನು ನ್ಯಾಯತೀರಿಸುವುದಕ್ಕೆ ಎಚ್ಚರವಾಗಿರಿ. ದುಷ್ಟ ಅಪರಾಧಿಗಳಲ್ಲಿ ಯಾರಿಗೂ ದಯೆಸಿಗದಿರಲಿ.</verse>
				<verse number="6">ಅವರು ಸಂಜೆಗೆ ಹಿಂದಿರುಗುವರು. ನಾಯಿಯ ಹಾಗೆ ಬೊಗಳುವರು. ಪಟ್ಟಣವನ್ನು ಸುತ್ತುವರು.</verse>
				<verse number="7">ಇಗೋ, ತಮ್ಮ ಬಾಯಿಂದ ಬೊಗಳುತ್ತಾರೆ. ಅವರ ತುಟಿಗಳಲ್ಲಿ ಖಡ್ಗಗಳು ಇವೆ. ಅವರು, “ನಮ್ಮನ್ನು ಕೇಳುವವರು ಯಾರು?” ಎಂದು ಅಂದುಕೊಳ್ಳುತ್ತಾರೆ.</verse>
				<verse number="8">ಆದರೆ ಯೆಹೋವ ದೇವರೇ, ನೀವು ಅವರನ್ನು ನೋಡಿ ನಗುವಿರಿ. ಇತರ ಜನಾಂಗವೆಲ್ಲ ಅಪಹಾಸ್ಯಕ್ಕಿಡಾಗಲಿ.</verse>
				<verse number="9">ದೇವರೇ, ನನ್ನ ಬಲವೇ, ನಿಮಗಾಗಿ ಕಾದುಕೊಂಡಿರುವೆನು. ನನ್ನ ದೇವರೇ, ನೀವು ನನ್ನ ಕೋಟೆಯಾಗಿರುವಿರಿ.</verse>
				<verse number="10">ದೇವರು ಪ್ರಸನ್ನರಾಗಿ ನನ್ನ ಮುಂದೆ ಹೋಗುವರು. ದೇವರು ನನ್ನ ನಿಂದಕರ ಮೇಲೆ ಜಯಿಸುವಂತೆ ಮಾಡುವರು.</verse>
				<verse number="11">ನಮ್ಮ ಗುರಾಣಿಯಾಗಿರುವ ಯೆಹೋವ ದೇವರೇ, ನನ್ನ ಜನರು ಮರೆಯದ ಹಾಗೆ ಅವರು ಉಳಿದಿರಲಿ. ನಿಮ್ಮ ಪರಾಕ್ರಮದಿಂದ ಅವರನ್ನು ದಂಡಿಸಿರಿ.</verse>
				<verse number="12">ಅವರ ಬಾಯಿಯ ಪಾಪಕ್ಕೂ, ಅವರ ತುಟಿಗಳ ಮಾತಿಗೂ, ಅವರು ನುಡಿಯುವ ಶಾಪಕ್ಕೂ ಅವರ ಗರ್ವವೇ ಅವರನ್ನು ಹಿಡಿಯಲಿ.</verse>
				<verse number="13">ಅವರು ದಂಡನೆಗೆ ತುತ್ತಾಗಲಿ. ಅವರು ನಿರ್ನಾಮವಾಗಿಬಿಡಲಿ. ಆಗ ಯಾಕೋಬರನ್ನು ಆಳುವವರು ದೇವರೇ ಎಂಬುದು ಇಡೀ ಲೋಕಕ್ಕೇ ಗೊತ್ತಾಗಲಿ.</verse>
				<verse number="14">ಅವರು ಸಂಜೆಗೆ ಹಿಂದಿರುಗುವರು. ನಾಯಿಯ ಹಾಗೆ ಬೊಗಳುವರು. ಪಟ್ಟಣವನ್ನು ಸುತ್ತುವರು.</verse>
				<verse number="15">ಅವರು ಆಹಾರಕ್ಕಾಗಿ ಅಲೆದಾಡುವರು. ತೃಪ್ತಿಯಾಗದಿದ್ದರೆ ಗೊಣಗುಟ್ಟುವರು.</verse>
				<verse number="16">ಆದರೆ ನಾನು ನಿಮ್ಮ ಬಲವನ್ನು ಕುರಿತು ಹಾಡುವೆನು. ಹೌದು, ಮುಂಜಾನೆ ನಿಮ್ಮ ಪ್ರೀತಿಯ ಕುರಿತು ಹಾಡುವೆನು. ಏಕೆಂದರೆ ನೀವು ನನಗೆ ಭದ್ರಕೋಟೆಯೂ, ನನ್ನ ಇಕ್ಕಟ್ಟಿನಲ್ಲಿ ಆಶ್ರಯವಾಗಿಯೂ ಇದ್ದೀರಿ.</verse>
				<verse number="17">ನನ್ನ ಬಲವಾಗಿರುವವರೇ, ನಿಮ್ಮನ್ನು ಕೊಂಡಾಡುವೆನು. ಏಕೆಂದರೆ ದೇವರೇ, ನೀವು ನನ್ನ ಭದ್ರಕೋಟೆ ಆಗಿದ್ದೀರಿ. ನೀವು ನಾನು ಭರವಸೆ ಇಡುವ ಕರುಣೆಯುಳ್ಳ ದೇವರೂ ಆಗಿದ್ದೀರಿ.</verse>
			</chapter>
			<chapter number="60">
				<verse number="1">ದೇವರೇ, ನನ್ನನ್ನು ಕೈಬಿಟ್ಟಿದ್ದೀರಾ? ನನ್ನನ್ನು ಚದರಿಸಿದ್ದೀರಾ? ನಮ್ಮ ಕಡೆಗೆ ಬೇಸರಗೊಂಡರೂ ನಮ್ಮನ್ನು ಪುನಃ ಸ್ಥಾಪಿಸಿರಿ.</verse>
				<verse number="2">ದೇಶವು ಕಂಪನಗೊಂಡು ಒಡೆದುಹೋಗಿದೆ. ಅದರ ಬಿರುಕುಗಳನ್ನು ಸ್ವಸ್ಥಮಾಡಿರಿ, ಅದು ನಡುಗುತ್ತಿದೆ.</verse>
				<verse number="3">ನಿಮ್ಮ ಜನರಿಗೆ ಕಠಿಣ ಕಾಲಗಳನ್ನು ನೀವು ತೋರಿಸಿದ್ದೀರಿ. ನಾವು ಭ್ರಮಣಗೊಳಿಸುವ ದ್ರಾಕ್ಷಾರಸವನ್ನು ಕುಡಿದವರಂತೆ ಆದೆವು.</verse>
				<verse number="4">ನಿಮ್ಮ ಭಕ್ತರಿಗೆ ಧ್ವಜವನ್ನು ನಿಲ್ಲಿಸಿದ್ದೀರಿ. ಶತ್ರುಗಳ ಬಿಲ್ಲಿನ ವಿರುದ್ಧ ಹಾರಿಸಬಹುದಾದ ಧ್ವಜವನ್ನೇ ನೀಡಿದ್ದೀರಿ.</verse>
				<verse number="5">ನೀವು ಪ್ರೀತಿಸುವವರು ಬಿಡುಗಡೆಯಾಗುವಂತೆ ನಿಮ್ಮ ಬಲಗೈಯಿಂದ ರಕ್ಷಿಸಿ ನಮಗೆ ಸಹಾಯಮಾಡಿರಿ.</verse>
				<verse number="6">ದೇವರು ತಮ್ಮ ಪರಿಶುದ್ಧ ಸ್ಥಳದಿಂದ ಹೀಗೆ ನುಡಿದಿದ್ದಾರೆ: “ನಾನು ಜಯದಿಂದ ಶೆಕೆಮ್ ಪ್ರದೇಶವನ್ನು ಹಂಚುವೆನು. ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು.</verse>
				<verse number="7">ಗಿಲ್ಯಾದ್ ನನ್ನದು; ಮನಸ್ಸೆ ನನ್ನದು, ಎಫ್ರಾಯೀಮ್ ನನ್ನ ಶಿರಸ್ತ್ರಾಣ, ಯೆಹೂದವು ನನ್ನ ರಾಜದಂಡ.</verse>
				<verse number="8">ಮೋವಾಬ್ ನನ್ನ ಸ್ನಾನ ಪಾತ್ರೆಯು, ಎದೋಮ್ ನನ್ನ ಕೆರಗಳ ಸ್ಥಳ. ಫಿಲಿಷ್ಟಿಯರ ಮೇಲೆ ಜಯೋತ್ಸಾಹ ಮಾಡುವೆನು.”</verse>
				<verse number="9">ಕೋಟೆಯ ಪಟ್ಟಣಕ್ಕೆ ನನ್ನನ್ನು ಕರೆತರುವವರು ಯಾರು? ಎದೋಮಿಗೆ ನನ್ನನ್ನು ನಡೆಸುವವರು ಯಾರು?</verse>
				<verse number="10">ದೇವರೇ, ಈಗ ನೀವು ನಮ್ಮ ಸೈನ್ಯಗಳ ಸಂಗಡ ಹೊರಡುವುದಿಲ್ಲವೋ ನಮ್ಮನ್ನು ಕೈಬಿಟ್ಟಿದ್ದೀರೋ?</verse>
				<verse number="11">ವೈರಿಗಳ ವಿರೋಧ ನಮಗೆ ಸಹಾಯಮಾಡಿರಿ. ಮನುಷ್ಯರ ಸಹಾಯವು ವ್ಯರ್ಥ.</verse>
				<verse number="12">ದೇವರಿಂದ ನಾವು ಜಯ ಹೊಂದುವೆವು. ದೇವರೇ ನಮ್ಮ ವೈರಿಗಳನ್ನು ತುಳಿದುಬಿಡುವರು.</verse>
			</chapter>
			<chapter number="61">
				<verse number="1">ದೇವರೇ, ನನ್ನ ಮೊರೆಯನ್ನು ಕೇಳಿರಿ. ನನ್ನ ಪ್ರಾರ್ಥನೆಯನ್ನು ಆಲಿಸಿರಿ.</verse>
				<verse number="2">ನನ್ನ ಹೃದಯವು ಕುಂದಿ ಹೋಗಿರಲಾಗಿ ಭೂಮಿಯ ಅಂತ್ಯದಿಂದ ನಿಮಗೆ ಮೊರೆಯಿಡುತ್ತಿರುವೆನು. ನನಗಿಂತ ಎತ್ತರವಾದ ಬಂಡೆಗೆ ನನ್ನನ್ನು ನಡೆಸಿರಿ.</verse>
				<verse number="3">ನೀವೇ ನನಗೆ ಆಶ್ರಯವಾಗಿದ್ದೀರಿ. ಶತ್ರುವಿಗೆ ಎದುರಾಗಿ ಬಲವಾದ ಬುರುಜಾಗಿದ್ದೀರಿ.</verse>
				<verse number="4">ನಿಮ್ಮ ಗುಡಾರದಲ್ಲಿ ನಿತ್ಯವಾಗಿ ನಿವಾಸಿಸಲು ಹಾರೈಸುತ್ತಿದ್ದೇನೆ. ನಿಮ್ಮ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.</verse>
				<verse number="5">ದೇವರೇ, ನೀವು ನನ್ನ ಹರಕೆಗಳನ್ನು ಕೇಳಿದ್ದೀರಿ. ನಿಮ್ಮ ಹೆಸರಿಗೆ ಭಯಪಡುವವರಿಗೆ ಕೊಡುವ ಸೊತ್ತನ್ನು ನನಗೂ ಕೊಟ್ಟಿದ್ದೀರಿ.</verse>
				<verse number="6">ಅರಸನ ಜೀವನದ ದಿನಗಳನ್ನು ಹೆಚ್ಚಿಸಿರಿ. ಆತನ ವರ್ಷಗಳನ್ನು ತಲತಲಾಂತರಗಳವರೆಗೆ ವೃದ್ಧಿಪಡಿಸಿರಿ.</verse>
				<verse number="7">ಆತನು ಎಂದೆಂದಿಗೂ ದೇವರ ಮುಂದೆ ಆಳಿಕೆಮಾಡಲಿ. ಆತನನ್ನು ಕಾಯುವ ಹಾಗೆ ನಿಮ್ಮ ಪ್ರೀತಿ, ಸತ್ಯವನ್ನು ನೇಮಿಸಿರಿ.</verse>
				<verse number="8">ಆಗ ನಾನು ನನ್ನ ಹರಕೆಗಳನ್ನು ದಿನದಿನವೂ ಸಲ್ಲಿಸುವೆನು. ನಿಮ್ಮ ಹೆಸರನ್ನು ನಾನು ಎಂದೆಂದಿಗೂ ಕೀರ್ತಿಸುವೆನು.</verse>
			</chapter>
			<chapter number="62">
				<verse number="1">ದೇವರಲ್ಲಿಯೇ ನನ್ನ ಪ್ರಾಣಕ್ಕೆ ಶಾಂತಿ, ನನ್ನ ರಕ್ಷಣೆಯು ದೇವರಿಂದಲೇ.</verse>
				<verse number="2">ದೇವರು ಮಾತ್ರವೇ ನನ್ನ ಬಂಡೆಯೂ ನನ್ನ ರಕ್ಷಣೆಯೂ, ನನ್ನ ಕೋಟೆಯೂ ಆಗಿದ್ದಾರೆ. ನಾನೆಂದಿಗೂ ಕದಲೆನು.</verse>
				<verse number="3">ಹಾನಿಮಾಡುವವರೇ, ಎಷ್ಟರವರೆಗೆ ನೀವು ದಾಳಿಮಾಡುವಿರಿ. ಬಾಗುವ ಗೋಡೆಯಂತೆಯೂ, ಅಲ್ಲಾಡುವ ಬೇಲಿಯಂತೆಯೂ ನನ್ನನ್ನು ಕೆಡವಲು ಯತ್ನಿಸುವಿರಾ?</verse>
				<verse number="4">ಅವರು ನನ್ನನ್ನು ಉನ್ನತ ಸ್ಥಾನದಿಂದ ದಬ್ಬುವುದಕ್ಕೆ ಆಲೋಚಿಸುತ್ತಿದ್ದಾರೆ. ಅವರು ಸುಳ್ಳನ್ನು ಇಷ್ಟಪಡುತ್ತಾರೆ; ತಮ್ಮ ಬಾಯಿಂದ ಆಶೀರ್ವದಿಸಿ, ಹೃದಯದಲ್ಲಿ ಶಪಿಸುತ್ತಾರೆ.</verse>
				<verse number="5">ಹೌದು, ದೇವರಲ್ಲಿಯೇ ನನ್ನ ಪ್ರಾಣಕ್ಕೆ ಶಾಂತಿ. ನನ್ನ ನಿರೀಕ್ಷೆಯು ದೇವರಿಂದಲೇ.</verse>
				<verse number="6">ದೇವರೇ ನನ್ನ ಬಂಡೆಯೂ ನನ್ನ ರಕ್ಷಣೆಯೂ, ನನ್ನ ಕೋಟೆಯೂ ಆಗಿದ್ದಾರೆ. ನಾನೆಂದಿಗೂ ಕದಲೆನು.</verse>
				<verse number="7">ದೇವರು ನನ್ನ ರಕ್ಷಣೆಗೂ ನನ್ನ ಗೌರವಕ್ಕೂ ಆಧಾರವಾಗಿದ್ದಾರೆ. ದೇವರು ನನ್ನ ಬಲವಾದ ಬಂಡೆಯೂ ನನ್ನ ಆಶ್ರಯವೂ ಆಗಿದ್ದಾರೆ.</verse>
				<verse number="8">ಜನರೇ, ಎಲ್ಲಾ ಕಾಲದಲ್ಲಿಯೂ ದೇವರಲ್ಲಿ ಭರವಸೆ ಇಡಿರಿ. ನಿಮ್ಮ ಹೃದಯವನ್ನು ದೇವರ ಮುಂದೆ ಒಯ್ಯಿರಿ. ದೇವರು ನಮಗೆ ಆಶ್ರಯವಾಗಿದ್ದಾರೆ.</verse>
				<verse number="9">ಸಾಮಾನ್ಯ ಜನರು ಬರೀ ಉಸಿರೇ, ಉನ್ನತ ಜನರು ಬರೀ ಸುಳ್ಳೇ. ತಕ್ಕಡಿಯಲ್ಲಿ ತೂಗಿದರೆ ಅವರೇನೂ ಇಲ್ಲ, ಎಲ್ಲರೂ ಬರೀ ಉಸಿರೇ.</verse>
				<verse number="10">ಅನ್ಯಾಯದ ಸುಲಿಗೆಯಲ್ಲಿ ಭರವಸೆ ಇಡಬೇಡಿರಿ. ಸೂರೆಮಾಡಿದ್ದರಲ್ಲಿ ಗರ್ವಪಡಬೇಡಿರಿ. ಆಸ್ತಿಯು ಹೆಚ್ಚಾದರೆ ಅದರ ಮೇಲೆ ಮನಸ್ಸಿಡಬೇಡಿರಿ.</verse>
				<verse number="11">ಒಂದು ಸಾರಿ ದೇವರು ಮಾತನಾಡಿದ್ದಾರೆ. ನಾನು ಎರಡು ಸಾರಿ ಇದನ್ನು ಹೀಗೆಂದು ಕೇಳಿದ್ದೇನೆ: “ದೇವರೇ, ಶಕ್ತಿಯು ನಿಮಗೇ ಸೇರಿದೆ.</verse>
				<verse number="12">ಯೆಹೋವ ದೇವರೇ, ನಿಮ್ಮಲ್ಲಿ ಒಡಂಬಡಿಕೆಯ ಪ್ರೀತಿ ಇದೆ. ನೀವು ಪ್ರತಿ ಮನುಷ್ಯನಿಗೂ ಅವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುತ್ತೀರಿ.”</verse>
			</chapter>
			<chapter number="63">
				<verse number="1">ದೇವರೇ, ನನ್ನ ದೇವರು ನೀವೇ, ನಿಮ್ಮನ್ನು ಕುತೂಹಲದಿಂದ ಹುಡುಕುತ್ತಿದ್ದೇನೆ. ನಾನು ನಿಮಗಾಗಿ ದಾಹಗೊಂಡಿದ್ದೇನೆ. ನೀರಿಲ್ಲದೆ ಭೂಮಿಯಲ್ಲಿದ್ದವನು ಹೇಗೆ ನೀರಿಗಾಗಿ ಹಾತೊರೆವಂತೆ ನನ್ನ ಇಡೀ ಸರ್ವಸ್ವವೂ ನಿಮಗಾಗಿ ದಾಹಗೊಂಡಿರುತ್ತದೆ. ನಾನು ನಿಮ್ಮನ್ನೇ ಅಪೇಕ್ಷಿಸುತ್ತಿದ್ದೇನೆ.</verse>
				<verse number="2">ನಾನು ನಿಮ್ಮ ಶಕ್ತಿಯನ್ನೂ ನಿಮ್ಮ ಮಹಿಮೆಯನ್ನೂ ಪರಿಶುದ್ಧ ಸ್ಥಳದಲ್ಲಿ ಕಂಡಿದ್ದೇನೆ. ಹೌದು, ನಾನು ನಿಮ್ಮನ್ನೇ ದೃಷ್ಟಿಸಿದ್ದೇನೆ.</verse>
				<verse number="3">ನಿಮ್ಮ ಪ್ರೀತಿಯು ಜೀವಕ್ಕಿಂತ ಶ್ರೇಷ್ಠವಾದದ್ದು. ನನ್ನ ತುಟಿ ನಿಮ್ಮನ್ನು ಮಹಿಮೆಪಡಿಸುವುದು.</verse>
				<verse number="4">ನಾನು ಜೀವಿಸುವ ಕಾಲವೆಲ್ಲಾ ನಿಮ್ಮನ್ನೇ ಸ್ತುತಿಸುವೆನು. ನಿಮ್ಮ ಹೆಸರಿನಲ್ಲಿ ನಾನು ನನ್ನ ಕೈ ಮುಗಿಯುವೆನು.</verse>
				<verse number="5">ಮೃಷ್ಟ ಭೋಜನದಿಂದಲೋ ಎಂಬಂತೆ ನಾನು ನಿಮ್ಮಲ್ಲಿ ಸಂತೃಪ್ತನಾಗಿದ್ದೇನೆ. ಉತ್ಸಾಹದ ತುಟಿಗಳಿಂದ ನನ್ನ ಬಾಯಿಯು ನಿಮ್ಮನ್ನು ಸ್ತುತಿಸುವುದು.</verse>
				<verse number="6">ನನ್ನ ಹಾಸಿಗೆಯ ಮೇಲೆ ನಿಮ್ಮನ್ನು ಸ್ಮರಿಸುವಾಗ ರಾತ್ರಿಯ ಜಾವಗಳಲ್ಲಿ ನಿಮ್ಮನ್ನು ಧ್ಯಾನಿಸುತ್ತಿರುವೆನು.</verse>
				<verse number="7">ಏಕೆಂದರೆ ನೀವೇ ನನಗೆ ಸಹಾಯಕರಾಗಿದ್ದೀರಿ. ನಿಮ್ಮ ರೆಕ್ಕೆಗಳ ನೆರಳಿನಲ್ಲಿ ಹಾಡುತ್ತಿರುವೆನು.</verse>
				<verse number="8">ನನ್ನ ಪ್ರಾಣವು ನಿಮ್ಮನ್ನು ಆತುಕೊಂಡಿದೆ. ನಿಮ್ಮ ಬಲಗೈ ನನಗೆ ಬೆಂಬಲವಾಗಿದೆ.</verse>
				<verse number="9">ನನ್ನ ಪ್ರಾಣಕ್ಕೆ ಕೇಡು ಬಯಸುವವರು ತಾವೇ ನಾಶವಾಗುವರು ಅವರು ಭೂಮಿಯ ಆಳಕ್ಕೆ ಹೋಗುವರು.</verse>
				<verse number="10">ಖಡ್ಗದಿಂದ ಅವರು ಬೀಳುವರು. ನರಿಗಳಿಗೆ ಆಹಾರವಾಗುವರು.</verse>
				<verse number="11">ಆದರೆ ಅರಸನು ದೇವರಲ್ಲಿ ಸಂತೋಷಿಸುವನು. ದೇವರ ಪ್ರತಿಜ್ಞೆ ಹೊಂದಿದವರು ದೇವರನ್ನು ಮಹಿಮೆಪಡಿಸುವರು. ಆದರೆ ಸುಳ್ಳಾಡುವವರ ಬಾಯಿ ಮುಚ್ಚಿಹೋಗುವುದು.</verse>
			</chapter>
			<chapter number="64">
				<verse number="1">ದೇವರೇ, ನನ್ನ ದೂರುಗಳನ್ನು ನಿಮ್ಮ ಮುಂದಿಡುವಾಗ ನನ್ನ ಬಿನ್ನಹವನ್ನು ಕೇಳಿರಿ. ಶತ್ರುವಿನ ಹೆದರಿಕೆಯಿಂದ ನನ್ನ ಜೀವವನ್ನು ಕಾಪಾಡಿರಿ.</verse>
				<verse number="2">ದುರ್ಮಾರ್ಗಿಗಳ ಗುಪ್ತ ಆಲೋಚನೆಗಳಿಗೂ, ದುಷ್ಟರ ಒಳಸಂಚಿಗೂ ನನ್ನನ್ನು ಮರೆಮಾಡಿರಿ.</verse>
				<verse number="3">ಅವರು ತಮ್ಮ ನಾಲಿಗೆಯನ್ನು ಖಡ್ಗದಂತೆ ಮಸೆಯುತ್ತಾರೆ.</verse>
				<verse number="4">ನಿರ್ದೋಷಿಯ ಕಡೆಗೆ ಕಹಿಮಾತುಗಳನ್ನು ಬಾಣದಂತೆ ಗುರಿಯಿಟ್ಟಿದ್ದಾರೆ. ಅಂಜದೆ ಫಕ್ಕನೆ ಅವನ ಕಡೆಗೆ ಎಸೆಯುತ್ತಾರೆ.</verse>
				<verse number="5">ತಮ್ಮೊಳಗೆ ಕೇಡನ್ನು ಪ್ರೋತ್ಸಾಹ ಮಾಡುತ್ತಾರೆ. ರಹಸ್ಯವಾಗಿ ಬಲೆಗಳನ್ನು ಒಡ್ಡುವುದಕ್ಕೆ ಮಾತನಾಡುತ್ತಾ, “ನಮ್ಮನ್ನು ಕಾಣುವವರು ಯಾರು?” ಎಂದುಕೊಳ್ಳುತ್ತಾರೆ.</verse>
				<verse number="6">ಅವರು ಅನ್ಯಾಯಗಳನ್ನು ಕಲ್ಪಿಸಿ, “ನಾವು ಒಳ್ಳೇ ಉಪಾಯವನ್ನು ಮಾಡಿದ್ದೇವೆ,” ಅಂದುಕೊಳ್ಳುತ್ತಾರೆ. ನಿಶ್ಚಯವಾಗಿ ಮಾನವರ ಆಂತರ್ಯವೂ ಹೃದಯವೂ ಕುಯುಕ್ತಿಯಿಂದ ಕೂಡಿದೆ.</verse>
				<verse number="7">ಆದರೆ ದೇವರು ಅವರ ಬಾಣದಿಂದಲೇ, ಫಕ್ಕನೆ ಅವರಿಗೆ ಗಾಯಗಳಾಗುವಂತೆ ಅನುಮತಿಸುವರು.</verse>
				<verse number="8">ಹೀಗೆ ಅವರು ತಮ್ಮ ನಾಲಿಗೆಯಿಂದ ತಾವೇ ಎಡವಿ ಬೀಳುವಂತೆ ಮಾಡಿಕೊಳ್ಳುವರು. ಅವರನ್ನು ಕಾಣುವವರೆಲ್ಲರೂ ತಲೆಯಾಡಿಸಿ ಅಣಕಿಸುವರು.</verse>
				<verse number="9">ಎಲ್ಲಾ ಮನುಷ್ಯರೂ ಭಯಪಟ್ಟು ದೇವರ ಕಾರ್ಯಗಳನ್ನು ಸಾರುವರು. ದೇವರು ಮಾಡಿದವುಗಳನ್ನು ಆಲೋಚಿಸಿಕೊಳ್ಳುವರು.</verse>
				<verse number="10">ನೀತಿವಂತರು ಯೆಹೋವ ದೇವರಲ್ಲಿ ಆನಂದಪಟ್ಟು ದೇವರನ್ನೇ ಆಶ್ರಯಿಸಿಕೊಳ್ಳುವರು. ಸರಳ ಹೃದಯದವರೆಲ್ಲರೂ ದೇವರನ್ನು ಮಹಿಮೆಪಡಿಸುವರು.</verse>
			</chapter>
			<chapter number="65">
				<verse number="1">ದೇವರೇ, ಚೀಯೋನಿನಲ್ಲಿ ನಿಮಗೋಸ್ಕರ ಸ್ತೋತ್ರವು ಕಾದಿದೆ. ನಿಮಗೆ ನಮ್ಮ ಹರಕೆಗಳನ್ನು ಪೂರೈಸುವೆವು.</verse>
				<verse number="2">ಪ್ರಾರ್ಥನೆಯನ್ನು ಕೇಳುವವರೇ, ಎಲ್ಲಾ ಜನರು ನಿಮ್ಮ ಬಳಿಗೆ ಬರುವರು.</verse>
				<verse number="3">ನಾವು ನಮ್ಮ ಪಾಪಗಳಿಂದ ತುಂಬಿಹೋಗಿರುವಾಗ ನೀವೇ ನಮ್ಮ ದ್ರೋಹಗಳಿಗಾಗಿ ದೋಷಪರಿಹಾರಕರು.</verse>
				<verse number="4">ನೀವು ಆಯ್ದುಕೊಂಡು ನಿಮ್ಮ ಬಳಿಗೆ ಬರಮಾಡಿಕೊಳ್ಳುವವನು ಧನ್ಯನು. ಏಕೆಂದರೆ ನಿಮ್ಮ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿಮ್ಮ ಪರಿಶುದ್ಧ ಮಂದಿರವಾದ ನಿಮ್ಮ ಆಲಯದ ಒಳ್ಳೆಯ ಸಂಗತಿಗಳಿಂದ ನಮಗೆ ತೃಪ್ತಿಯಾಗಲಿ.</verse>
				<verse number="5">ಅತಿಶಯ ಹಾಗು ನೀತಿಯ ಕೃತ್ಯಗಳನ್ನು ನಡೆಸಿ, ನೀವು ನಮಗೆ ಉತ್ತರ ಕೊಡುವಿರಿ. ನಮ್ಮ ರಕ್ಷಣೆಯ ದೇವರೇ, ಭೂಮಿಯಲ್ಲಿರುವವರಿಗೂ, ಸಮುದ್ರದ ಆಚೆ ದೂರವಾಗಿರುವವರಿಗೂ ನೀವು ಭರವಸೆಯಾಗಿದ್ದೀರಿ.</verse>
				<verse number="6">ಬೆಟ್ಟಗಳನ್ನು ನಿಮ್ಮ ಶಕ್ತಿಯಿಂದ ರೂಪಿಸಿದವರು ನೀವೇ. ಜಲದಿಂದ ನಡು ಕಟ್ಟಿಕೊಂಡಿರುವವರೂ ನೀವೇ.</verse>
				<verse number="7">ಸಮುದ್ರಗಳ ಘೋಷವನ್ನೂ, ಅವುಗಳ ತೆರೆಗಳ ಘೋಷವನ್ನೂ, ಪ್ರಜೆಗಳ ಕೋಲಾಹಲವನ್ನೂ ಶಮನಗೊಳಿಸುವವರು ನೀವೇ.</verse>
				<verse number="8">ಇಡೀ ಭೂಮಿಯಲ್ಲಿರುವವರು ನಿಮ್ಮ ಅದ್ಭುತಕಾರ್ಯಗಳಿಗೆ ಅತಿಶಯಗೊಂಡಿದ್ದಾರೆ. ಉದಯಾಸ್ತಮಾನಗಳಲ್ಲಿ ಇರುವವರನ್ನು ಉತ್ಸಾಹ ಧ್ವನಿಗೈಯುವಂತೆ ಮಾಡುತ್ತೀರಿ.</verse>
				<verse number="9">ಭೂಮಿಯನ್ನು ಸಂಧಿಸಿ, ಅದಕ್ಕೆ ಮಳೆಬರುವಂತೆ, ಅದನ್ನು ಫಲವತ್ತಾಗಿ ಮಾಡುತ್ತೀರಿ. ದೇವರ ನದಿಯು ನೀರಿನಿಂದ ತುಂಬಿದೆ. ಹೀಗೆ ಭೂಮಿಯನ್ನು ಸಿದ್ಧಮಾಡಿ, ಜನರಿಗೆ ನೀವು ಧಾನ್ಯವನ್ನು ಒದಗಿಸುತ್ತೀರಿ.</verse>
				<verse number="10">ನೇಗಿಲ ಸಾಲುಗಳನ್ನು ಸಮಮಾಡುತ್ತೀರಿ. ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀರಿ, ಅದರ ಮೊಳಕೆಯನ್ನು ಆಶೀರ್ವದಿಸುತ್ತೀರಿ.</verse>
				<verse number="11">ವರ್ಷಕ್ಕೆ ನಿಮ್ಮ ಉದಾರತೆಯ ಕಿರೀಟವನ್ನು ಇಡುತ್ತೀರಿ. ನಿಮ್ಮ ಹಾದಿಗಳು ಸಮೃದ್ಧಿಯಿಂದ ತುಂಬಿ ಪ್ರವಾಹಿಸುತ್ತಿದೆ.</verse>
				<verse number="12">ಮರುಭೂಮಿಯ ಹುಲ್ಲುಗಾವಲಲ್ಲಿ ವೃಷ್ಟಿಯಾಗಿದೆ. ಗುಡ್ಡಗಳು ಉಲ್ಲಾಸವನ್ನು ಧರಿಸಿಕೊಂಡಿವೆ.</verse>
				<verse number="13">ಹುಲ್ಲುಗಾವಲುಗಳು ಮಂದೆಗಳಿಂದ ಹೊದಿಕೆಯಾಗಿವೆ. ಕಣಿವೆಗಳು ಸಹ ಧಾನ್ಯದಿಂದ ಮುಚ್ಚಿರುತ್ತವೆ. ಅವು ಉತ್ಸಾಹಗೊಂಡು ಹಾಡುತ್ತವೆ.</verse>
			</chapter>
			<chapter number="66">
				<verse number="1">ಸಮಸ್ತ ದೇಶಗಳೇ, ದೇವರಿಗೆ ಉತ್ಸಾಹಧ್ವನಿ ಮಾಡಿರಿ.</verse>
				<verse number="2">ದೇವರ ಹೆಸರಿನ ಮಹಿಮೆಯನ್ನು ಕೊಂಡಾಡಿರಿ. ದೇವರ ಸ್ತೋತ್ರವನ್ನು ಘನವುಳ್ಳದ್ದಾಗಿ ಮಾಡಿರಿ.</verse>
				<verse number="3">ನೀವು ದೇವರಿಗೆ, “ನಿಮ್ಮ ಕೃತ್ಯಗಳು ಅತಿಶಯವಾದವುಗಳಾಗಿವೆ. ನಿಮ್ಮ ಶತ್ರುಗಳು ನಿಮ್ಮೆದುರಿನಲ್ಲಿ ಮುದುರಿ ಬೀಳುವಷ್ಟು ನಿಮ್ಮ ಶಕ್ತಿ ದೊಡ್ಡದಾಗಿದೆ.</verse>
				<verse number="4">ಭೂಮಿಯೆಲ್ಲಾ ನಿಮ್ಮನ್ನು ಆರಾಧಿಸುವುದು. ನಿಮ್ಮನ್ನು ಕೀರ್ತಿಸುತ್ತಾ ಲೋಕವು ನಿಮ್ಮ ನಾಮವನ್ನು ಕೀರ್ತಿಸುತ್ತಿರುವುದು,” ಎಂದು ಹೇಳಿರಿ.</verse>
				<verse number="5">ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ. ಮಾನವರ ಪರವಾಗಿ ಮಾಡಿರುವ ದೇವರ ಕಾರ್ಯಗಳು ಅತಿಶಯವಾಗಿವೆ.</verse>
				<verse number="6">ದೇವರು ಸಮುದ್ರವನ್ನು ಒಣ ಭೂಮಿಯನ್ನಾಗಿ ಮಾಡಿದರು. ಜನರು ಕಾಲಿನಿಂದ ನದಿಯನ್ನು ದಾಟಿದರು. ಬನ್ನಿರಿ, ದೇವರಲ್ಲಿ ಆನಂದಿಸೋಣ.</verse>
				<verse number="7">ದೇವರು ತಮ್ಮ ಶಕ್ತಿಯಿಂದ ಎಂದೆಂದಿಗೂ ಆಳುವವರಾಗಿದ್ದಾರೆ. ದೇವರ ಕಣ್ಣುಗಳು ಜನಾಂಗಗಳನ್ನು ದೃಷ್ಟಿಸುತ್ತವೆ; ದೇವರಿಗೆ ವಿರೋಧವಾಗಿ ದಂಗೆಕೋರರು ಏಳದಿರಲಿ.</verse>
				<verse number="8">ಸಮಸ್ತ ಜನರೇ, ನೀವು ನಮ್ಮ ದೇವರನ್ನು ಸ್ತುತಿಸಿರಿ. ದೇವರನ್ನು ಸ್ತುತಿಸುವ ಶಬ್ದವು ಕೇಳಿಸಲಿ.</verse>
				<verse number="9">ದೇವರು ನಮ್ಮ ಜೀವನವನ್ನು ಕಾಪಾಡಿ, ನಮ್ಮ ಕಾಲು ಎಡವದಂತೆ ಮಾಡಿದ್ದಾರೆ.</verse>
				<verse number="10">ದೇವರೇ, ನೀವು ನಮ್ಮನ್ನು ಪರಿಶೋಧಿಸಿದ್ದೀರಿ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶುದ್ಧೀಕರಿಸಿದ್ದೀರಿ.</verse>
				<verse number="11">ನೀವು ಬಲೆಯೊಳಗೆ ನಮ್ಮನ್ನು ಸಿಕ್ಕಿಸಿದ್ದೀರಿ. ನಮ್ಮ ಬೆನ್ನಿನ ಮೇಲೆ ಭಾರವನ್ನು ಹೊರಿಸಿದ್ದೀರಿ.</verse>
				<verse number="12">ಮನುಷ್ಯರು ನಮ್ಮ ತಲೆ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀರಿ. ನಾವು ಬೆಂಕಿಯನ್ನೂ ನೀರನ್ನೂ ದಾಟುವಂತೆ ಮಾಡಿದ್ದೀರಿ. ಆದರೆ ನೀವು ನಮ್ಮನ್ನು ಸಮೃದ್ಧಿಯ ಸ್ಥಳದೊಳಗೆ ಬರಮಾಡಿದ್ದೀರಿ.</verse>
				<verse number="13">ನಾನು ದಹನಬಲಿಯೊಂದಿಗೆ ನಿಮ್ಮ ಆಲಯಕ್ಕೆ ಬರುವೆನು.</verse>
				<verse number="14">ನನ್ನ ಇಕ್ಕಟ್ಟಿನಲ್ಲಿ ತುಟಿ ಬಿಚ್ಚಿ ನನ್ನ ಬಾಯಿಂದ ನುಡಿದ ನನ್ನ ಹರಕೆಗಳನ್ನು ನಾನು ನಿಮಗೆ ಸಲ್ಲಿಸುವೆನು.</verse>
				<verse number="15">ಕೊಬ್ಬಿದ ದಹನಬಲಿಗಳನ್ನು ಕಾಣಿಕೆಯಾಗಿ ಟಗರುಗಳನ್ನು; ಹೋತ ಹೋರಿಗಳ ಯಜ್ಞವನ್ನು ಅರ್ಪಿಸುವೆನು.</verse>
				<verse number="16">ಸಮಸ್ತ ದೇವಭಕ್ತರೇ, ಬಂದು ಕೇಳಿರಿ. ದೇವರು ನನಗೆ ಮಾಡಿದ್ದನ್ನು ನಾನು ನಿಮಗೆ ತಿಳಿಸುವೆನು.</verse>
				<verse number="17">ನನ್ನ ದೇವರಿಗೆ ಮೊರೆಯಿಟ್ಟೆನು, ನನ್ನ ನಾಲಿಗೆಯಲ್ಲಿ ದೇವರ ಸ್ತೋತ್ರವಿತ್ತು.</verse>
				<verse number="18">ಪಾಪವನ್ನು ನಾನು ನನ್ನ ಹೃದಯದಲ್ಲಿ ಬೆಳೆಸಿಕೊಂಡಿದ್ದರೆ, ಯೆಹೋವ ದೇವರು ನನ್ನ ಪ್ರಾರ್ಥನೆಯನ್ನು ಕೇಳುತ್ತಿರಲಿಲ್ಲ.</verse>
				<verse number="19">ಆದರೆ ಈಗ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾರೆ.</verse>
				<verse number="20">ನನ್ನ ಪ್ರಾರ್ಥನೆಯನ್ನು ತಿರಸ್ಕರಿಸದ ದೇವರಿಗೆ ಸ್ತೋತ್ರವಾಗಲಿ. ತಮ್ಮ ಪ್ರೀತಿಯನ್ನು ನನ್ನಿಂದ ತೊಲಗಿಸದೆ ಇರುವೆ. ದೇವರಿಗೆ ಸ್ತೋತ್ರವಾಗಲಿ.</verse>
			</chapter>
			<chapter number="67">
				<verse number="1">ದೇವರು ನಮ್ಮ ಮೇಲೆ ಕರುಣೆಯಿಟ್ಟು, ನಮ್ಮನ್ನು ಆಶೀರ್ವದಿಸಲಿ. ದೇವರು ತಮ್ಮ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ.</verse>
				<verse number="2">ಆಗ ದೇವರೇ, ನಿಮ್ಮ ಮಾರ್ಗಗಳು ಭೂಮಿಯಲ್ಲಿ ಗೊತ್ತಾಗುವುದು. ನಿಮ್ಮ ರಕ್ಷಣೆಯು ಎಲ್ಲಾ ಜನಾಂಗಗಳಲ್ಲಿ ಪ್ರಸಿದ್ಧವಾಗುವುದು.</verse>
				<verse number="3">ದೇವರೇ, ಜನರು ನಿಮ್ಮನ್ನು ಕೊಂಡಾಡಲಿ, ಸರ್ವ ಜನಾಂಗಗಳು ನಿಮ್ಮನ್ನು ಸ್ತುತಿಸಲಿ.</verse>
				<verse number="4">ಜನಾಂಗಗಳು ಸಂತೋಷಪಟ್ಟು ಉತ್ಸಾಹದಿಂದ ಹಾಡಲಿ. ಏಕೆಂದರೆ ನೀವು ಜನರನ್ನು ನೀತಿಯಿಂದ ನ್ಯಾಯತೀರಿಸಿ, ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀರಿ.</verse>
				<verse number="5">ದೇವರೇ, ಜನರು ನಿಮ್ಮನ್ನು ಕೊಂಡಾಡಲಿ. ಸರ್ವ ಜನಾಂಗಗಳು ನಿಮ್ಮನ್ನು ಸ್ತುತಿಸಲಿ.</verse>
				<verse number="6">ಭೂಮಿಯು ತನ್ನ ಬೆಳೆಯನ್ನು ಕೊಡುವುದು. ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವರು.</verse>
				<verse number="7">ದೇವರು ನಮ್ಮನ್ನು ಆಶೀರ್ವದಿಸುವರು. ಭೂಮಿಯಲ್ಲಿರುವ ಎಲ್ಲರೂ ದೇವರಲ್ಲಿ ಭಯಭಕ್ತಿಯುಳ್ಳವರಾಗಿರುವರು.</verse>
			</chapter>
			<chapter number="68">
				<verse number="1">ದೇವರು ಕ್ರಿಯಾಶೀಲರಾಗಲಿ. ಅವರ ಶತ್ರುಗಳು ಚದರಿಹೋಗಲಿ. ದೇವರನ್ನು ವಿರೋಧಿಸುವವರು ಅವರ ಸಮ್ಮುಖದಿಂದ ಓಡಿಹೋಗಲಿ.</verse>
				<verse number="2">ಗಾಳಿಯಿಂದ ಹೊಗೆ ಹಾರಿಹೋಗುವಂತೆ ಅವರು ಹಾರಿಹೋಗಲಿ. ಮೇಣವು ಬೆಂಕಿಯ ಮುಂದೆ ಕರಗುವಂತೆ, ದುಷ್ಟರು ದೇವರ ಮುಂದೆ ನಾಶವಾಗಲಿ.</verse>
				<verse number="3">ಆದರೆ ನೀತಿವಂತರು ಸಂತೋಷಿಸಲಿ. ದೇವರ ಮುಂದೆ ಉಲ್ಲಾಸಪಡಲಿ. ಹೌದು, ಅವರು ಹರ್ಷಾನಂದರಾಗಲಿ.</verse>
				<verse number="4">ದೇವರಿಗೆ ಹಾಡಿರಿ, ದೇವರ ಹೆಸರಿಗೆ ಸ್ತುತಿಗಳನ್ನು ಹಾಡಿರಿ. ಮೇಘಾರೂಢರಾಗಿರುವ ದೇವರನ್ನು ಕೊಂಡಾಡಿರಿ. ಅವರ ಹೆಸರು ಯೆಹೋವ ದೇವರು, ಅವರ ಮುಂದೆ ಉಲ್ಲಾಸಪಡಿರಿ.</verse>
				<verse number="5">ದೇವರು ತಮ್ಮ ಪರಿಶುದ್ಧ ಸ್ಥಳದಲ್ಲಿ ದಿಕ್ಕಿಲ್ಲದವರಿಗೆ ತಂದೆ, ವಿಧವೆಯರಿಗೆ ರಕ್ಷಕರಾಗಿದ್ದಾರೆ.</verse>
				<verse number="6">ದೇವರು ಒಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾರೆ. ಸೆರೆಯವರನ್ನು ಹರ್ಷಗೊಳಿಸಿ ಬಿಡುಗಡೆ ಮಾಡುತ್ತಾರೆ. ಆದರೆ ಎದುರು ಬೀಳುವವರು ಒಣಭೂಮಿಯಲ್ಲಿ ವಾಸಿಸುತ್ತಾರೆ.</verse>
				<verse number="7">ದೇವರೇ, ನೀವು ನಿಮ್ಮ ಜನರ ಮುಂದೆ ಹೊರಟು ಕಾಡಿನಲ್ಲಿ ನಡೆದಾಗ,</verse>
				<verse number="8">ಭೂಮಿಯು ಕದಲಿತು, ಆಕಾಶಗಳು ಸಹ ನಿಮ್ಮ ಮುಂದೆ ಮಳೆಗರೆದವು. ಇಸ್ರಾಯೇಲರ ದೇವರ ಮುಂದೆ, ಹೌದು, ದೇವರ ಮುಂದೆಯೇ ಸೀನಾಯಿ ಸಹ ಕದಲಿತು.</verse>
				<verse number="9">ದೇವರೇ, ನೀವು ಹೇರಳವಾಗಿ ಮಳೆಯನ್ನು ಸುರಿಸಿ, ದಣಿದ ನಿಮ್ಮ ಬಾಧ್ಯತೆಯನ್ನು ನೀವು ಉತ್ಸಾಹಪಡಿಸಿದಿರಿ.</verse>
				<verse number="10">ನಿಮ್ಮ ಪ್ರಜೆಗಳು ಅದರಲ್ಲಿ ವಾಸಮಾಡಿದರು. ದೇವರೇ, ನಿಮ್ಮ ಒಳ್ಳೆಯತನದಿಂದ ಬಡವರಿಗೋಸ್ಕರ ಒದಗಿಸಿದ್ದೀರಿ.</verse>
				<verse number="11">ಯೆಹೋವ ದೇವರು ವಾಕ್ಯವನ್ನು ಕೊಟ್ಟರು. ಆ ವಾಕ್ಯವನ್ನು ಹೀಗೆಂದು ಪ್ರಕಟಿಸಿದ ಮಹಿಳೆಯರ ಗುಂಪು ದೊಡ್ಡದಾಗಿತ್ತು:</verse>
				<verse number="12">“ಸೈನ್ಯದೊಡನೆ ಅರಸರು ಓಡಿಹೋದರು. ಪಾಳೆಯದಲ್ಲಿರುವ ಮಹಿಳೆಯರು ಕೊಳ್ಳೆಯನ್ನು ಹಂಚಿಕೊಳ್ಳುವರು.</verse>
				<verse number="13">ನೀವು ಪಾಳೆಯದ ಬೆಂಕಿಯ ಬಳಿ ಮಲಗಿದರೂ, ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ, ಅದರ ಗರಿಗಳು ಬಂಗಾರದಿಂದಲೂ ಹೊಳೆಯುವಂತಿರುವಿರಿ.”</verse>
				<verse number="14">ಸರ್ವಶಕ್ತರಾದ ದೇವರು ಅರಸರನ್ನು ಅಲ್ಲಿ ಚದರಿಸಿದಾಗ ಸಲ್ಮೋನಿನಲ್ಲಿ ಬಿಳೀ ಹಿಮ ಬಿದ್ದಂತಿತ್ತು.</verse>
				<verse number="15">ಬಾಷಾನ್ ಬೆಟ್ಟವು ದೇವರ ಬೆಟ್ಟದಂತೆ ಇದೆ; ಬಾಷಾನ್ ಬೆಟ್ಟವು ಉನ್ನತ ಬೆಟ್ಟವಾಗಿದೆ.</verse>
				<verse number="16">ಉನ್ನತ ಬೆಟ್ಟಗಳೇ, ಏಕೆ ಕುಣಿಯುತ್ತೀರಿ? ದೇವರು ನಿವಾಸಕ್ಕಾಗಿ ಅಪೇಕ್ಷಿಸುವ ಬೆಟ್ಟವು ಇದೇ ಹೌದು, ಯೆಹೋವ ದೇವರು ಅದರಲ್ಲಿ ಸದಾಕಾಲವೂ ವಾಸಿಸುವರು.</verse>
				<verse number="17">ದೇವರಿಗೆ ಸಹಸ್ರಾರು ಮಾತ್ರವಲ್ಲ ಲಕ್ಷಾಂತರ ರಥಗಳು ಇವೆ. ಕರ್ತ ಆಗಿರುವ ಯೆಹೋವ ದೇವರು ಅವುಗಳ ಸಮೇತವಾಗಿ ಸೀನಾಯಿ ಬೆಟ್ಟದಲ್ಲಿದ್ದ ಹಾಗೆ ಪವಿತ್ರಾಲಯದಲ್ಲಿದ್ದಾರೆ.</verse>
				<verse number="18">ನೀವು ಅನೇಕ ಸೆರೆಯವರ ಹಿಡಿದುಕೊಂಡು ಉನ್ನತಕ್ಕೆ ಹೋದಾಗ, ಯೆಹೋವ ದೇವರು ತಿರುಗಿಬೀಳುವವರ ಮಧ್ಯದಲ್ಲಿ ಸಹ ನಿವಾಸಿಸುವಂತೆ ಆ ತಿರುಗಿಬಿದ್ದ ಮನುಷ್ಯರಿಂದ ದಾನಗಳನ್ನು ಅಂಗೀಕರಿಸಿದ್ದೀರಿ.</verse>
				<verse number="19">ಪ್ರತಿದಿನವೂ ನಮ್ಮ ಭಾರವನ್ನು ಹೊರುವ ಕರ್ತದೇವರಿಗೆ ಸ್ತೋತ್ರ. ನಮ್ಮನ್ನು ರಕ್ಷಿಸುವ ದೇವರು ಸ್ತುತಿಹೊಂದಲಿ.</verse>
				<verse number="20">ನಮ್ಮ ದೇವರು ರಕ್ಷಣೆಯ ದೇವರಾಗಿದ್ದಾರೆ. ಸಾರ್ವಭೌಮ ಯೆಹೋವ ದೇವರು ಮರಣದಿಂದ ಬಿಡುಗಡೆ ಮಾಡುತ್ತಾರೆ.</verse>
				<verse number="21">ದೇವರು ತಮ್ಮ ಶತ್ರುಗಳ ತಲೆಯನ್ನೂ, ತನ್ನ ಅಪರಾಧಗಳಲ್ಲಿ ಇನ್ನೂ ಮುಂದುವರಿಯುವವರ ಕೂದಲುಳ್ಳ ಮಂಡೆಯನ್ನೂ ಗಾಯಮಾಡುವರು.</verse>
				<verse number="22">ಯೆಹೋವ ದೇವರು ಹೀಗೆ ಹೇಳುತ್ತಾರೆ, “ಬಾಷಾನಿನಿಂದ ಅವರನ್ನು ತಿರುಗಿ ಬರಮಾಡುವೆನು; ಸಮುದ್ರದ ಅಗಾಧಗಳಿಂದ ಜನರನ್ನು ತಿರುಗಿ ಬರಮಾಡುವೆನು.</verse>
				<verse number="23">ಆಗ ನಿಮ್ಮ ಪಾದಗಳು ನಿಮ್ಮ ವೈರಿಗಳ ರಕ್ತದ ಮೇಲಿರಲಿ. ನಾಯಿಗಳು ಅದನ್ನು ನೆಕ್ಕಲಿ.”</verse>
				<verse number="24">ದೇವರೇ, ನಿಮ್ಮ ಮೆರವಣಿಗೆಯು ಪ್ರಕಟವಾಗಿದೆ. ನನ್ನ ಅರಸರಾಗಿರುವ ದೇವರ ಮೆರವಣಿಗೆಯು ಪರಿಶುದ್ಧ ಸ್ಥಳವನ್ನು ಪ್ರವೇಶಿಸುವುದು.</verse>
				<verse number="25">ಹಾಡುವವರು ಮುಂದಾಗಿಯೂ, ಬಾರಿಸುವವರು ಹಿಂದಾಗಿಯೂ, ದಮ್ಮಡಿ ಬಡಿಯುವ ಕನ್ಯೆಯರು ಮಧ್ಯದಲ್ಲಿಯೂ ಹಿಂಬಾಲಿಸುವರು.</verse>
				<verse number="26">ಮಹಾಸಭೆಯಲ್ಲಿ ದೇವರನ್ನು ಸ್ತುತಿಸಿರಿ. ಇಸ್ರಾಯೇಲರ ಸಮೂಹದವರಲ್ಲಿ ಯೆಹೋವ ದೇವರನ್ನು ಸ್ತುತಿಸಿರಿ.</verse>
				<verse number="27">ಬೆನ್ಯಾಮೀನನ ಚಿಕ್ಕ ಗೋತ್ರವು ಅವರನ್ನು ನಡೆಸುವುದು. ಯೆಹೂದದ ಪ್ರಧಾನರೂ, ಜೆಬುಲೂನನ ಪ್ರಧಾನರೂ ನಫ್ತಾಲಿಯ ಪ್ರಧಾನರೂ ಅಲ್ಲಿ ಇದ್ದಾರೆ.</verse>
				<verse number="28">ದೇವರೇ, ನಿಮ್ಮ ಶಕ್ತಿಯನ್ನು ಪ್ರಕಟಿಸಿರಿ, ಮೊದಲು ಮಾಡಿದಂತೆಯೇ ಈಗಲೂ ನಿಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿರಿ.</verse>
				<verse number="29">ಯೆರೂಸಲೇಮಿನ ನಿಮ್ಮ ಮಂದಿರದ ನಿಮಿತ್ತ ಅರಸರು ನಿಮಗೆ ಕಾಣಿಕೆಗಳನ್ನು ಸಮರ್ಪಿಸಲಿ.</verse>
				<verse number="30">ಆಪು ಹುಲ್ಲಿನ ಮಧ್ಯದಲ್ಲಿರುವ ಕಾಡುಮೃಗಗಳ ಹಾಗೆಯೂ ಕರುಗಳ ಮಧ್ಯದಲ್ಲಿರುವ ಹೋರಿಗಳ ಹಾಗೆಯೂ ಇರುವ ಜನಾಂಗವನ್ನು ಗದರಿಸಿರಿ. ಮೃಗದಂಥವರು ತಗ್ಗಿಸಿಕೊಂಡು ಬೆಳ್ಳಿ ಗಟ್ಟಿಗಳನ್ನು ನಿಮಗೆ ತರಲಿ. ಆದರೆ ಯುದ್ಧದಲ್ಲಿ ಆನಂದಿಸುವ ರಾಷ್ಟ್ರಗಳನ್ನು ಚದರಿಸಿರಿ.</verse>
				<verse number="31">ಈಜಿಪ್ಟಿನಿಂದ ರಾಯಭಾರಿಗಳು ಬರುವರು. ಕೂಷ್ ದೇಶದವರು ತಾವಾಗಿಯೇ ಬಂದು ದೇವರಿಗೆ ಅಧೀನವಾಗುವರು.</verse>
				<verse number="32">ಭೂಮಿಯ ರಾಜ್ಯಗಳೇ, ದೇವರಿಗೆ ಹಾಡಿರಿ. ಯೆಹೋವ ದೇವರನ್ನು ಕೀರ್ತಿಸಿರಿ.</verse>
				<verse number="33">ಪೂರ್ವದ ಆಕಾಶಗಳಲ್ಲಿ ಸವಾರಿ ಮಾಡುವ ದೇವರಿಗೆ ಹಾಡಿರಿ. ದೇವರ ಸ್ವರವು ಗುಡುಗಿನಂತೆ ಇರುವುದು.</verse>
				<verse number="34">ದೇವರ ಶಕ್ತಿಯನ್ನು ಘೋಷಿಸಿರಿ. ಇಸ್ರಾಯೇಲರ ಮೇಲೆ ಅವರ ಪ್ರಭಾವವಿರುತ್ತದೆ. ಮೇಘಗಳಲ್ಲಿ ಅವರ ಶಕ್ತಿಯು ಇರುತ್ತದೆ.</verse>
				<verse number="35">ದೇವರೇ, ನಿಮ್ಮ ಪರಿಶುದ್ಧ ಸ್ಥಳದಲ್ಲಿ ನೀವು ಅತಿಶಯವಾಗಿದ್ದೀರಿ. ಇಸ್ರಾಯೇಲರ ದೇವರೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುವರು. ದೇವರಿಗೆ ಸ್ತುತಿಯಾಗಲಿ.</verse>
			</chapter>
			<chapter number="69">
				<verse number="1">ದೇವರೇ, ನನ್ನನ್ನು ರಕ್ಷಿಸಿರಿ. ಏಕೆಂದರೆ, ಪ್ರವಾಹ ಕುತ್ತಿಗೆಯ ವರೆಗೆ ಬಂದಿದೆ.</verse>
				<verse number="2">ನೆಲವಿಲ್ಲದಿರುವ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತಿದ್ದೇನೆ. ಪ್ರವಾಹಗಳು ನನ್ನ ಮೇಲೆ ಹಾದುಹೋಗುವ ನೀರಿನ ಅಗಾಧಕ್ಕೆ ನಾನು ಬಂದಿದ್ದೇನೆ.</verse>
				<verse number="3">ನಾನು ಮೊರೆಯಿಟ್ಟು ದಣಿದಿದ್ದೇನೆ. ನನ್ನ ಗಂಟಲು ಒಣಗಿದೆ. ನಾನು ದೇವರನ್ನು ಎದುರು ನೋಡುವುದರಿಂದ ನನ್ನ ಕಣ್ಣು ಕ್ಷೀಣವಾಗಿವೆ.</verse>
				<verse number="4">ಕಾರಣವಿಲ್ಲದೆ ನನ್ನನ್ನು ದ್ವೇಷಿಸುವವರು ನನ್ನ ತಲೆಗೂದಲುಗಳಿಗಿಂತ ಹೆಚ್ಚಾಗಿದ್ದಾರೆ. ನನ್ನನ್ನು ನಾಶಮಾಡ ಬಯಸುವವರೂ ಕಾರಣವಿಲ್ಲದೆ ನನಗೆ ಶತ್ರುಗಳಾಗಿದ್ದಾರೆ. ನಾನು ಅಪಹರಿಸದಿದ್ದರೂ ದಂಡ ಕೊಡಬೇಕಾಯಿತು.</verse>
				<verse number="5">ದೇವರೇ, ನೀವು ನನ್ನ ಮೂರ್ಖತನವನ್ನು ತಿಳಿದಿದ್ದೀರಿ. ನನ್ನ ಅಪರಾಧಗಳು ನಿಮಗೆ ಮರೆಯಾಗಿಲ್ಲ.</verse>
				<verse number="6">ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮನ್ನು ನಂಬಿದವರಿಗೆ ನನ್ನಿಂದ ನಿರಾಶೆಯಾಗದಿರಲಿ; ಇಸ್ರಾಯೇಲರ ದೇವರೇ, ನಿಮ್ನನ್ನು ಹುಡುಕುವವರು ನನ್ನಿಂದ ಅಪಮಾನಕ್ಕೆ ಗುರಿಯಾಗದಿರಲಿ.</verse>
				<verse number="7">ನಾನು ನಿಮ್ಮ ನಿಮಿತ್ತ ನಿಂದೆಗೆ ಒಳಗಾಗಿದ್ದೇನೆ. ಅವಮಾನವು ನನ್ನ ಮುಖವನ್ನು ಮುಚ್ಚಿದೆ.</verse>
				<verse number="8">ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ. ನನ್ನ ಒಡಹುಟ್ಟಿದವರಿಗೇ ಪರಕೀಯನಾಗಿದ್ದೇನೆ.</verse>
				<verse number="9">ಏಕೆಂದರೆ ನಿಮ್ಮ ಆಲಯದ ಮೇಲಿನ ಆಸಕ್ತಿಯು ಬೆಂಕಿಯಂತೆ ನನ್ನನ್ನು ದಹಿಸಿಬಿಟ್ಟಿದೆ. ನಿಮ್ಮನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ.</verse>
				<verse number="10">ನಾನು ಅತ್ತು ಉಪವಾಸ ಮಾಡಿದಾಗ ನಿಂದೆಗೆ ಒಳಗಾಗಬೇಕಾಯಿತು.</verse>
				<verse number="11">ಗೋಣಿತಟ್ಟನ್ನು ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ. ಇದರಿಂದ ನಾನು ಅವರಿಗೆ ಗಾದೆಯ ಮಾತಾದೆನು.</verse>
				<verse number="12">ಊರುಬಾಗಿಲಲ್ಲಿ ಕೂತುಕೊಳ್ಳುವವರು ಪರಿಹಾಸ್ಯ ಮಾಡುತ್ತಾರೆ. ನಾನು ಮದ್ಯಪಾನಿಗಳಿಗೆ ಗಾಯನ ವಿಷಯವಾಗಿದ್ದೇನೆ.</verse>
				<verse number="13">ಯೆಹೋವ ದೇವರೇ, ನಾನಾದರೋ ನಿಮಗೆ ಮೊರೆಯಿಟ್ಟಿದ್ದೇನೆ. ಇದು ನಿಮ್ಮ ಮೆಚ್ಚಿಕೆಯ ಸಕಾಲ. ಓ ದೇವರೇ, ನಿಮ್ಮ ಮಹಾಪ್ರೀತಿಯಿಂದ ನನಗೆ ನಿಮ್ಮ ನಿಶ್ಚಯ ರಕ್ಷಣೆಯನ್ನು ದಯಪಾಲಿಸಿರಿ.</verse>
				<verse number="14">ನನ್ನನ್ನು ಕೆಸರಿನೊಳಗಿಂದ ಬಿಡಿಸಿರಿ. ನಾನು ಮುಳುಗದೆ ಇರಲಿ. ನನ್ನನ್ನು ದ್ವೇಷಿಸಿಸುವವರಿಂದಲೂ ನೀರಿನ ಅಗಾಧದಿಂದಲೂ ನನಗೆ ಬಿಡುಗಡೆ ಆಗಲಿ.</verse>
				<verse number="15">ನೀರಿನ ಪ್ರವಾಹವು ನನ್ನ ಮೇಲೆ ಹಾದುಹೋಗದೆ ಇರಲಿ. ಅಗಾಧವು ನನ್ನನ್ನು ನುಂಗದೆ ಇರಲಿ. ಕುಣಿಯು ನನ್ನ ಮೇಲೆ ತನ್ನ ಬಾಯನ್ನು ಮುಚ್ಚದೆ ಇರಲಿ.</verse>
				<verse number="16">ಯೆಹೋವ ದೇವರೇ, ನಿಮ್ಮ ಪ್ರೀತಿಯ ಒಳ್ಳೆಯತನದಿಂದ ನನಗೆ ಉತ್ತರಕೊಡಿರಿ. ನಿಮ್ಮ ಮಹಾ ಕರುಣೆಯಿಂದ ನನ್ನ ಕಡೆಗೆ ತಿರುಗಿರಿ.</verse>
				<verse number="17">ನಿಮ್ಮ ಮುಖವನ್ನು ನಿಮ್ಮ ಸೇವಕನಿಗೆ ಮರೆಮಾಡಬೇಡಿರಿ. ನಾನು ಇಕ್ಕಟ್ಟಿನಲ್ಲಿದ್ದೇನೆ. ಬೇಗ ನನಗೆ ಉತ್ತರಕೊಡಿರಿ.</verse>
				<verse number="18">ನನಗೆ ಸಮೀಪವಾಗಿ ನನ್ನನ್ನು ಕಾಪಾಡಿರಿ. ನನ್ನ ಶತ್ರುಗಳ ನಿಮಿತ್ತ ನನ್ನನ್ನು ಬಿಡಿಸಿರಿ.</verse>
				<verse number="19">ನೀವು ನನಗಿರುವ ನಿಂದೆ, ನಾಚಿಕೆ ಹಾಗೂ ನನ್ನ ಅವಮಾನವನ್ನೂ ತಿಳಿದಿದ್ದೀರಿ. ನನ್ನ ವೈರಿಗಳೆಲ್ಲರು ನಿಮ್ಮ ಮುಂದೆ ಇದ್ದಾರೆ.</verse>
				<verse number="20">ನಿಂದೆಯು ನನ್ನ ಹೃದಯವನ್ನು ಮುರಿದಿದೆ. ನನ್ನನ್ನು ನಿಸ್ಸಹಾಯಕನನ್ನಾಗಿ ಮಾಡಿದೆ. ಅನುತಾಪಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಇರಲಿಲ್ಲ. ಸಂತೈಸುವವರಿಗೋಸ್ಕರ ಸಹ ಎದುರು ನೋಡಿದೆನು, ಆದರೆ ಯಾರೂ ಸಿಕ್ಕಲಿಲ್ಲ.</verse>
				<verse number="21">ನನ್ನ ಆಹಾರಕ್ಕಾಗಿ ಕಹಿಯಾದದ್ದನ್ನು ಕೊಟ್ಟರು. ನನ್ನ ದಾಹಕ್ಕಾಗಿ ನನಗೆ ಹುಳಿರಸವನ್ನು ಕುಡಿಯಲು ಕೊಟ್ಟರು.</verse>
				<verse number="22">ಅವರ ಊಟವೇ ಅವರಿಗೆ ಉರುಲಾಗಲಿ. ಸುಖವಾಗಿರುವವರಿಗೆ ಅದು ಬೋನಾಗಲಿ.</verse>
				<verse number="23">ಅವರ ಕಣ್ಣುಗಳು ಕಾಣದ ಹಾಗೆ ಕತ್ತಲಾಗಲಿ. ಮತ್ತು ಅವರ ಬೆನ್ನು ಎಂದೆಂದಿಗೂ ಬಗ್ಗಿ ಹೋಗಲಿ</verse>
				<verse number="24">ಅವರು ಕೋಪಕ್ಕೆ ಗುರಿಯಾಗಲಿ. ಅವರು ಬೇಸರಕ್ಕೆ ತುತ್ತಾಗಲಿ.</verse>
				<verse number="25">ಅವರ ವಾಸಸ್ಥಾನವು ಹಾಳಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ.</verse>
				<verse number="26">ನೀವು ಗಾಯಮಾಡಿದ ನನ್ನನ್ನು ಹಿಂಸಿಸುತ್ತಾರೆ. ನೀವು ನೋಯಿಸಿದ ನನ್ನನ್ನು ಕುರಿತು ಚುಚ್ಚಿಮಾತನಾಡಿಕೊಳ್ಳುತ್ತಾರೆ.</verse>
				<verse number="27">ಅಪರಾಧದ ಮೇಲೆ ಅಪರಾಧವು ಅವರ ಮೇಲೆ ಬರಲಿ. ಅವರು ನಿಮ್ಮ ರಕ್ಷಣೆಯಲ್ಲಿ ಸೇರದೆ ಇರಲಿ.</verse>
				<verse number="28">ಜೀವಪುಸ್ತಕದೊಳಗಿಂದ ಅವರ ಹೆಸರು ಅಳಿದು ಹೋಗಲಿ. ನೀತಿವಂತರ ಸಂಗಡ ಅವರ ಹೆಸರು ಬರೆಯದೆ ಇರಲಿ.</verse>
				<verse number="29">ದೇವರೇ, ನಾನು ನೊಂದು ವ್ಯಥೆಗೊಂಡಿದ್ದೇನೆ. ನಿಮ್ಮ ರಕ್ಷಣೆಯು ನನ್ನನ್ನು ಕಾಪಾಡಲಿ.</verse>
				<verse number="30">ನಾನು ದೇವರ ಹೆಸರನ್ನು ಹಾಡಿ ಸ್ತುತಿಸುವೆನು. ಸ್ತೋತ್ರದಿಂದ ದೇವರನ್ನು ಸ್ತುತಿಸುವೆನು.</verse>
				<verse number="31">ಅದು ಯೆಹೋವ ದೇವರಿಗೆ ಎಳೆಯ ಎತ್ತು ಯಜ್ಞಗಳಿಗಿಂತ, ಕೊಂಬೂ ಗೊರಸುಗಳುಳ್ಳ ಹೋರಿಗಳಿಗಿಂತ ಮೆಚ್ಚಿಕೆಯಾಗಿರುವುದು.</verse>
				<verse number="32">ಇದನ್ನು ದೀನರು ಕಂಡು ಸಂತೋಷಪಡುವರು. ದೇವರನ್ನು ಹುಡುಕುವವರೇ, ನಿಮ್ಮ ಹೃದಯವು ಚೈತನ್ಯಗೊಳ್ಳಲಿ.</verse>
				<verse number="33">ಯೆಹೋವ ದೇವರು ಬಡವರ ಮೊರೆಗೆ ಕಿವಿಗೊಡುತ್ತಾರೆ. ಸೆರೆಯಲ್ಲಿರುವ ತಮ್ಮ ಜನರನ್ನು ತಿರಸ್ಕರಿಸುವುದಿಲ್ಲ.</verse>
				<verse number="34">ಆಕಾಶವೂ ಭೂಮಿಯೂ ಸಮುದ್ರಗಳೂ, ಅವುಗಳಲ್ಲಿ ಸಂಚರಿಸುವುದೆಲ್ಲವೂ ದೇವರನ್ನು ಸ್ತುತಿಸಲಿ.</verse>
				<verse number="35">ದೇವರು ಚೀಯೋನನ್ನು ರಕ್ಷಿಸುವರು. ದೇವರು ಯೆಹೂದದ ಪಟ್ಟಣಗಳನ್ನು ಕಟ್ಟುವರು. ಜನರು ಅಲ್ಲಿ ವಾಸಮಾಡಿ, ಅದನ್ನು ಸ್ವಾಧೀನಮಾಡಿಕೊಳ್ಳುವರು.</verse>
				<verse number="36">ದೇವರ ಸೇವಕರ ಸಂತತಿಯು ಅದನ್ನು ಬಾಧ್ಯವಾಗಿ ಹೊಂದುವುದು. ದೇವರ ಹೆಸರನ್ನು ಪ್ರೀತಿಸುವವರು ಅದರಲ್ಲಿ ವಾಸಮಾಡುವರು.</verse>
			</chapter>
			<chapter number="70">
				<verse number="1">ದೇವರೇ, ನನ್ನನ್ನು ಬಿಡಿಸುವುದಕ್ಕೆ ತ್ವರೆಮಾಡಿರಿ; ಯೆಹೋವ ದೇವರೇ, ನನಗೆ ಸಹಾಯಮಾಡಲು ಬೇಗನೆ ಬನ್ನಿರಿ.</verse>
				<verse number="2">ನನ್ನ ಪ್ರಾಣ ತೆಗೆಯಲು ಯತ್ನಿಸುವವರೆಲ್ಲರು ನಾಚಿಕೆಪಟ್ಟು ಗಲಿಬಿಲಿಯಾಗಲಿ. ನನ್ನ ಕೇಡಿನಲ್ಲಿ ಸಂತೋಷಪಡುವವರೆಲ್ಲರೂ ಹಿಂಜರಿದು ಅವಮಾನ ಹೊಂದಲಿ.</verse>
				<verse number="3">“ಆಹಾ! ಆಹಾ!” ಎಂದು ನನ್ನನ್ನು ಹಾಸ್ಯಮಾಡುವವರು ತಮ್ಮ ನಾಚಿಕೆಯ ಫಲಕ್ಕಾಗಿ ಬೆಂಗೊಟ್ಟು ಓಡಲಿ.</verse>
				<verse number="4">ಆದರೆ, ನಿಮ್ಮನ್ನು ಹುಡುಕುವವರೆಲ್ಲರೂ ನಿಮ್ಮಲ್ಲಿ ಹರ್ಷಾನಂದಗೊಳ್ಳಲಿ. ನಿಮ್ಮ ರಕ್ಷಣೆಯನ್ನು ಪ್ರೀತಿಸುವವರು, “ದೇವರು ಮಹೋನ್ನತರು,” ಎಂದು ಯಾವಾಗಲೂ ಹೇಳಲಿ.</verse>
				<verse number="5">ಆದರೆ ನಾನು ಬಡವನೂ ಅಗತ್ಯದಲ್ಲಿರುವವನೂ ಆಗಿದ್ದೇನೆ. ದೇವರೇ, ಬೇಗನೆ ನನ್ನ ಬಳಿಗೆ ಬನ್ನಿರಿ. ನನ್ನ ಸಹಾಯವೂ ನನ್ನನ್ನು ಬಿಡಿಸುವವರೂ ನೀವೇ, ಯೆಹೋವ ದೇವರೇ, ತಡಮಾಡದೆ ಬನ್ನಿರಿ.</verse>
			</chapter>
			<chapter number="71">
				<verse number="1">ಯೆಹೋವ ದೇವರೇ, ನಿಮ್ಮಲ್ಲಿಯೇ ನಾನು ನನ್ನ ಭರವಸೆಯನ್ನಿಟ್ಟಿದ್ದೇನೆ. ನನಗೆ ಎಂದೂ ಆಶಾಭಂಗವಾಗದಿರಲಿ.</verse>
				<verse number="2">ನಿಮ್ಮ ನೀತಿಯಿಂದ ನನ್ನನ್ನು ಬಿಡಿಸಿ, ನನ್ನನ್ನು ಪಾರುಮಾಡಿರಿ. ನಿಮ್ಮ ಕಿವಿಯನ್ನು ನನ್ನ ಕಡೆಗೆ ತಿರುಗಿಸಿ, ನನ್ನನ್ನು ರಕ್ಷಿಸಿರಿ.</verse>
				<verse number="3">ನಾನು ಯಾವಾಗಲೂ ಆಶ್ರಯಿಸಿಕೊಳ್ಳುವ ಬಂಡೆಯಾಗಿರಿ. ನನ್ನನ್ನು ರಕ್ಷಿಸುವುದಕ್ಕೆ ಆಜ್ಞಾಪಿಸಿರಿ. ನನ್ನ ಬಂಡೆಯೂ ನನ್ನ ಕೋಟೆಯೂ ನೀವೇ ಆಗಿದ್ದೀರಿ.</verse>
				<verse number="4">ನನ್ನ ದೇವರೇ, ದುಷ್ಟನ ಕೈಗೂ ಅನ್ಯಾಯ ಮಾಡುವವನ ಮತ್ತು ಕ್ರೂರನ ಕೈಗೂ ನನ್ನನ್ನು ಸಿಕ್ಕಿಸದಿರಿ.</verse>
				<verse number="5">ಸಾರ್ವಭೌಮ ಯೆಹೋವ ದೇವರೇ, ನೀವು ನನ್ನ ನಿರೀಕ್ಷೆ ಆಗಿದ್ದೀರಿ. ನನ್ನ ಯೌವನದಿಂದ ನನ್ನ ಭರವಸೆಯೂ ಆಗಿದ್ದೀರಿ.</verse>
				<verse number="6">ಹುಟ್ಟಿನಿಂದ ನೀವೇ ನನ್ನ ಭರವಸೆ. ತಾಯಿಯ ಗರ್ಭದಿಂದ ನೀವೇ ನನ್ನನ್ನು ಹೊರಗೆ ತಂದಿದ್ದೀರಿ. ನಾನು ಯಾವಾಗಲೂ ನಿಮ್ಮನ್ನು ಸ್ತುತಿಸುತ್ತಿರುವೆನು.</verse>
				<verse number="7">ಅನೇಕರು ನನ್ನ ಸ್ಥಿತಿಯನ್ನು ಕಂಡು ಆಶ್ಚರ್ಯ ಪಡುತ್ತಾರೆ. ಆದರೆ ನೀವು ನನ್ನ ಬಲವಾದ ಆಶ್ರಯವಾಗಿದ್ದೀರಿ.</verse>
				<verse number="8">ನನ್ನ ಬಾಯಿ ನಿಮ್ಮ ಸ್ತೋತ್ರದಿಂದ ತುಂಬಿರಲಿ. ನಾನು ದಿನವೆಲ್ಲಾ ನಿಮ್ಮ ವೈಭವವನ್ನೇ ಸಾರುತ್ತಿರುವೆ.</verse>
				<verse number="9">ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡಿರಿ. ನನ್ನ ಶಕ್ತಿಯು ಕುಂದುತ್ತಿರುವಾಗ ನನ್ನನ್ನು ಕೈಬಿಡಬೇಡಿರಿ.</verse>
				<verse number="10">ನನ್ನ ಶತ್ರುಗಳು ನನಗೆ ವಿರೋಧವಾಗಿ ಮಾತನಾಡುತ್ತಾರೆ; ನನ್ನ ಪ್ರಾಣಕ್ಕೆ ಒಳಸಂಚು ಮಾಡುವವರು ಕೂಡಿಕೊಂಡು ದುರಾಲೋಚನೆ ಮಾಡುತ್ತಾರೆ.</verse>
				<verse number="11">ಅದೇನೆಂದರೆ, “ದೇವರು ಅವನನ್ನು ಕೈಬಿಟ್ಟಿದ್ದಾನೆ. ಅವನನ್ನು ಬೆನ್ನಟ್ಟಿ ಹಿಡಿಯಿರಿ, ಅವನನ್ನು ಬಿಡಿಸುವವರು ಯಾರೂ ಇಲ್ಲ,” ಎನ್ನುತ್ತಾರೆ.</verse>
				<verse number="12">ದೇವರೇ, ನನ್ನಿಂದ ದೂರವಾಗಿರಬೇಡಿರಿ. ದೇವರೇ, ಬೇಗ ಬಂದು ನನಗೆ ಸಹಾಯಮಾಡಿರಿ.</verse>
				<verse number="13">ನನ್ನನ್ನು ಆರೋಪಿಸುವವರು, ನಾಚಿಕೆಪಟ್ಟು ನಾಶವಾಗಲಿ. ನನ್ನ ಕೇಡಿಗಾಗಿ ಹುಡುಕುವವರನ್ನು ನಿಂದಾಪಮಾನಗಳು ಕವಿಯಲಿ.</verse>
				<verse number="14">ಆದರೆ ನಾನು ಎಂದೆಂದೂ ನಿಮ್ಮನ್ನು ನಿರೀಕ್ಷಿಸುತ್ತಾ, ನಿಮ್ಮನ್ನು ಇನ್ನೂ ಹೆಚ್ಚೆಚ್ಚಾಗಿ ಸ್ತುತಿಸುವೆನು.</verse>
				<verse number="15">ನನ್ನ ಬಾಯಿ ದಿನವೆಲ್ಲಾ ನಿಮ್ಮ ನೀತಿಯನ್ನೂ ನಿಮ್ಮ ರಕ್ಷಣೆಯನ್ನೂ ಪ್ರಕಟಿಸುವುದು. ಅವುಗಳನ್ನು ವಿವರಿಸಲು ನನಗೆ ತಿಳಿಯದು.</verse>
				<verse number="16">ಸಾರ್ವಭೌಮ ಯೆಹೋವ ದೇವರೇ ನಾನು ನಿಮ್ಮ ಮಹಾಕೃತ್ಯಗಳನ್ನು ಸಾರುವೆನು. ನಿಮ್ಮ ನೀತಿ ಕೃತ್ಯಗಳನ್ನು ಪ್ರಕಟಪಡಿಸುವೆನು.</verse>
				<verse number="17">ದೇವರೇ, ನನ್ನ ಯೌವನದಿಂದ ನನಗೆ ನೀವು ಕಲಿಸಿದ್ದೀರಿ. ಈವರೆಗೂ ನಿಮ್ಮ ಅದ್ಭುತಕಾರ್ಯಗಳನ್ನು ಘೋಷಿಸುತ್ತಿದ್ದೇನೆ.</verse>
				<verse number="18">ದೇವರೇ, ನಾನು ಮುಪ್ಪಿನವನೂ, ನೆರೆಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿಮ್ಮ ಶಕ್ತಿಯನ್ನೂ, ಮುಂದಿನ ಪೀಳಿಗೆಗೆ ನಿಮ್ಮ ಪರಾಕ್ರಮವನ್ನೂ ತಿಳಿಸುವವರೆಗೂ ನನ್ನನ್ನು ಕೈಬಿಡಬೇಡಿರಿ.</verse>
				<verse number="19">ದೇವರೇ, ನಿಮ್ಮ ನೀತಿಯು ಆಕಾಶವನ್ನು ಮುಟ್ಟುತ್ತದೆ. ಮಹತ್ಕಾರ್ಯಗಳನ್ನು ಮಾಡಿದ ದೇವರೇ, ನಿಮ್ಮ ಹಾಗೆ ಯಾರಿದ್ದಾರೆ?</verse>
				<verse number="20">ಅನೇಕ ಕಠಿಣವಾದ ಇಕ್ಕಟ್ಟುಗಳನ್ನು ನೋಡ ಮಾಡಿದ ನನ್ನನ್ನು ನೀವು ತಿರುಗಿ ಬದುಕಿಸಿದ್ದೀರಿ. ಭೂಮಿಯ ಅಧೋಭಾಗದಿಂದ ಪುನಃ ನನ್ನನ್ನು ಮೇಲಕ್ಕೆ ಎತ್ತುವಿರಿ.</verse>
				<verse number="21">ನೀವು ನನ್ನ ಗೌರವವನ್ನು ಹೆಚ್ಚಿಸಿ ನನ್ನನ್ನು ಮತ್ತೊಮ್ಮೆ ಆದರಿಸಿರಿ.</verse>
				<verse number="22">ನನ್ನ ದೇವರೇ, ನಾನು ನಿಮ್ಮನ್ನು ಸ್ತುತಿಸುವೆನು. ನಿಮ್ಮ ನಂಬಿಗಸ್ತಿಕೆಗಾಗಿ ವೀಣೆಯಿಂದ ಕೊಂಡಾಡುವೆನು. ಇಸ್ರಾಯೇಲರ ಪರಿಶುದ್ಧರೇ, ಕಿನ್ನರಿಯಿಂದ ನಿಮ್ಮನ್ನು ಸ್ತುತಿಸುವೆನು.</verse>
				<verse number="23">ನೀವು ನನ್ನನ್ನು ಬಿಡಿಸಿದ್ದಕ್ಕಾಗಿ ನನ್ನ ತುಟಿಗಳು ಆನಂದದಿಂದ ಹಾಡಿ ಸ್ತುತಿಸುತ್ತವೆ.</verse>
				<verse number="24">ನನ್ನ ನಾಲಿಗೆಯು ಸಹ ದಿನವೆಲ್ಲಾ ನಿಮ್ಮ ನೀತಿಯನ್ನು ಮಾತನಾಡುವುದು, ಏಕೆಂದರೆ ನನಗೆ ಕೇಡು ಬಗೆಯುವವರು ನಾಚಿಕೊಂಡು ತಲೆ ತಗ್ಗಿಸಿದ್ದಾರೆ.</verse>
			</chapter>
			<chapter number="72">
				<verse number="1">ದೇವರೇ, ನಿಮ್ಮ ನ್ಯಾಯವನ್ನು ಅರಸನಿಗೆ ಕಲಿಸಿಕೊಡಿರಿ. ನಿಮ್ಮ ನೀತಿಯನ್ನು ರಾಜಕುಮಾರನಿಗೆ ಕಲಿಸಿಕೊಡಿರಿ.</verse>
				<verse number="2">ಅರಸನು ನಿಮ್ಮ ಜನರಿಗೆ ನೀತಿಯಿಂದಲೂ ನಿಮ್ಮ ಬಾಧೆಪಟ್ಟ ಪ್ರಜೆಗೆ ನ್ಯಾಯದಿಂದಲೂ ತೀರ್ಪುಮಾಡಲಿ.</verse>
				<verse number="3">ಬೆಟ್ಟಗುಡ್ಡಗಳಿಂದ ಸಮೃದ್ಧಿಯೂ ನೀತಿಯ ಫಲವೂ ಜನರಿಗೆ ಬರಲಿ.</verse>
				<verse number="4">ಅರಸನು ಬಡವರ ನ್ಯಾಯ ಸ್ಥಾಪಿಸಲಿ. ಅವನು ಅಗತ್ಯತೆಯಲ್ಲಿರುವವರ ಮಕ್ಕಳನ್ನು ರಕ್ಷಿಸಲಿ. ದಬ್ಬಾಳಿಕೆ ಮಾಡುವವರನ್ನು ದಂಡಿಸಲಿ.</verse>
				<verse number="5">ಸೂರ್ಯನೂ ಚಂದ್ರನೂ ಇರುವವರೆಗೆ ತಲತಲಾಂತರಗಳು ಜನರು ಅರಸನಿಗೆ ಭಯಪಡಲಿ.</verse>
				<verse number="6">ಕೊಯ್ದ ಹುಲ್ಲಿನ ಮೇಲೆ ಬೀಳುವ ಮಳೆಯ ಹಾಗೆಯೂ, ಭೂಮಿಯನ್ನು ನೆನಸುತ್ತಾ ಸುರಿಯುವ ಮಳೆಗಳ ಹಾಗೆಯೂ ಅರಸನು ಇರಲಿ.</verse>
				<verse number="7">ಅರಸನ ದಿವಸಗಳಲ್ಲಿ ನೀತಿವಂತರು ವೃದ್ಧಿ ಆಗಲಿ. ಸಮೃದ್ಧಿಯಾದ ಸಮಾಧಾನವು ಚಂದ್ರನು ಇರುವವರೆಗೂ ಇರಲಿ.</verse>
				<verse number="8">ಸಮುದ್ರದಿಂದ ಸಮುದ್ರದವರೆಗೂ ನದಿಯಿಂದ ಭೂಮಿಯ ಕೊನೆಗಳವರೆಗೂ ಅರಸನು ಆಳಲಿ.</verse>
				<verse number="9">ಅರಸನ ಮುಂದೆ ಮರುಭೂಮಿಯ ನಿವಾಸಿಗಳು ಎರಗಲಿ. ಅರಸನ ಶತ್ರುಗಳು ಧೂಳನ್ನು ನೆಕ್ಕಲಿ.</verse>
				<verse number="10">ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ಅರಸನಿಗೆ ಸಲ್ಲಿಸಲಿ. ಶೆಬ ಮತ್ತು ಸೆಬದ ಅರಸರು ದಾನಗಳನ್ನು ತಂದೊಪ್ಪಿಸಲಿ.</verse>
				<verse number="11">ಹೌದು, ಎಲ್ಲಾ ಅರಸರು ನಮ್ಮ ಅರಸನ ಮುಂದೆ ಅಡ್ಡಬೀಳಲಿ. ಎಲ್ಲಾ ಜನಾಂಗಗಳು ಅರಸನಿಗೆ ಸೇವೆಸಲ್ಲಿಸಲಿ.</verse>
				<verse number="12">ಏಕೆಂದರೆ ಅರಸನಿಗೆ ಮೊರೆಯಿಡುವ ಬಡವರನ್ನೂ ಸಹಾಯಕನಿಲ್ಲದ ಬಾಧೆಪಡುವವರನ್ನೂ ಬಿಡಿಸುವನು.</verse>
				<verse number="13">ದರಿದ್ರನನ್ನೂ, ಬಡವನನ್ನೂ ಕರುಣಿಸುವನು. ಬಡವರ ಪ್ರಾಣಗಳನ್ನು ರಕ್ಷಿಸುವನು.</verse>
				<verse number="14">ಮೋಸ ದಬ್ಬಾಳಿಕೆಯಿಂದ ಜನರನ್ನು ಬಿಡುಗಡೆ ಮಾಡುವನು. ಜನರ ಜೀವವು ಆತನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು.</verse>
				<verse number="15">ಅರಸನು ಬಾಳಲಿ. ಆತನಿಗೆ ಶೆಬದ ಚಿನ್ನವನ್ನು ಕೊಡಲಿ. ಆತನಿಗೋಸ್ಕರ ಯಾವಾಗಲೂ ಪ್ರಾರ್ಥನೆ ಮಾಡಲಿ. ಇಡೀ ದಿನ ಆತನಿಗೆ ಆಶೀರ್ವಾದಗಳು ಉಂಟಾಗಲಿ.</verse>
				<verse number="16">ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯವರೆಗೂ ಇರಲಿ; ಅದರ ಫಲವು ಲೆಬನೋನಿನ ಹಾಗೆ ಸಮೃದ್ಧಿಯಾಗಲಿ; ಪಟ್ಟಣದವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿ ಆಗಲಿ.</verse>
				<verse number="17">ಅರಸನ ನಾಮವು ಎಂದೆಂದಿಗೂ ಇರಲಿ. ಸೂರ್ಯನಿರುವವರೆಗೂ ಆತನ ಹೆಸರು ಇರಲಿ. ಮನುಷ್ಯರು ಅರಸನಲ್ಲಿ ಆಶೀರ್ವಾದ ಹೊಂದಲಿ. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತನೆಂದು ಕರೆಯಲಿ.</verse>
				<verse number="18">ಅದ್ಭುತಗಳನ್ನು ಮಾಡುವುದರಲ್ಲಿ ಸರಿಸಾಟಿಯಿಲ್ಲದ ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ.</verse>
				<verse number="19">ದೇವರ ಘನವುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ. ದೇವರ ತೇಜಸ್ಸು ಭೂಮಿಯಲ್ಲೆಲ್ಲಾ ತುಂಬಲಿ. ಆಮೆನ್, ಆಮೆನ್.</verse>
				<verse number="20">ಇಷಯನ ಮಗ ದಾವೀದನ ಪ್ರಾರ್ಥನೆಗಳು ಇಲ್ಲಿಗೆ ಮುಕ್ತಾಯವಾಗುತ್ತವೆ.</verse>
			</chapter>
			<chapter number="73">
				<verse number="1">ದೇವರು ನಿಜವಾಗಿಯೂ ಇಸ್ರಾಯೇಲಿಗೂ ಶುದ್ಧ ಹೃದಯದವರಿಗೂ ಒಳ್ಳೆಯವರು.</verse>
				<verse number="2">ನನ್ನ ಪಾದಗಳು ಬಹಳಮಟ್ಟಿಗೆ ತಪ್ಪುವ ಹಾಗಿದ್ದವು. ನನ್ನ ಹೆಜ್ಜೆಗಳು ಜಾರುವುದಕ್ಕೆ ಬಹು ಸಮೀಪವಾಗಿದ್ದವು.</verse>
				<verse number="3">ಏಕೆಂದರೆ ನಾನು ದುಷ್ಟರ ಸೌಭಾಗ್ಯವನ್ನು ಕಂಡಾಗ ಮೂರ್ಖರ ಮೇಲೆ ಹೊಟ್ಟೆಕಿಚ್ಚುಪಟ್ಟೆನು.</verse>
				<verse number="4">ಏಕೆಂದರೆ ಅವರಿಗೆ ಹೋರಾಟಗಳು ಇಲ್ಲ. ಅವರ ದೇಹವು ಆರೋಗ್ಯಕರ ಮತ್ತು ದೃಢವಾಗಿದೆ.</verse>
				<verse number="5">ಇತರರ ಹಾಗೆ ಅವರಿಗೆ ಯಾವುದೇ ಹೊರೆ ಇಲ್ಲ ಮಾನವರಿಗೆ ತಗುಲುವ ಯಾವುದೇ ವ್ಯಾಧಿಯೂ ಅವರಿಗೆ ತಗುಲುವುದಿಲ್ಲ.</verse>
				<verse number="6">ಆದ್ದರಿಂದ ಗರ್ವವು ಕಂಠಮಾಲೆಯಂತೆ ಅವರನ್ನು ಸುತ್ತಿದೆ. ದಬ್ಬಾಳಿಕೆ ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತಿದೆ.</verse>
				<verse number="7">ಅವರ ಹೃದಯವು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ದುಷ್ಕಲ್ಪನೆಗಳಿಗೆ ಮಿತಿಯೇ ಇಲ್ಲ.</verse>
				<verse number="8">ಅವರು ಹಾಸ್ಯಮಾಡುವವರಾಗಿ ಕೇಡನ್ನೇ ಮಾತನಾಡುತ್ತಾರೆ ದಬ್ಬಾಳಿಕೆ ಮಾಡಲು ಗರ್ವದಿಂದ ಅವರು ಬೆದರಿಕೆ ಹಾಕುತ್ತಾರೆ.</verse>
				<verse number="9">ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ. ಭೂಲೋಕದಲ್ಲೆಲ್ಲಾ ಅವರ ಮಾತು ಮುಂದುವರೆದಿದೆ.</verse>
				<verse number="10">ಆದ್ದರಿಂದ ಜನರು ಅವರ ಕಡೆಗೆ ತಿರುಗುತ್ತಾರೆ. ಜನರಿಗೆ ಅವರ ಮಾತು ಬಹಳವಾಗಿ ದೊರೆಯುತ್ತದೆ.</verse>
				<verse number="11">ಅವರು, “ದೇವರಿಗೆ ಹೇಗೆ ಗೊತ್ತಾಗುವುದು? ಮಹೋನ್ನತನಿಗೆ ಏನಾದರೂ ತಿಳಿಯಲು ಸಾಧ್ಯವೇ?” ಎನ್ನುತ್ತಾರೆ.</verse>
				<verse number="12">ದುಷ್ಟರು ನಿಶ್ಚಿಂತರಾಗಿ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ.</verse>
				<verse number="13">ನನ್ನ ಹೃದಯವನ್ನು ಶುದ್ಧ ಮಾಡಿಕೊಂಡಿದ್ದು ವ್ಯರ್ಥವೋ? ನನ್ನ ಅಂಗೈಗಳನ್ನು ನಿರಪರಾಧದಲ್ಲಿ ತೊಳೆದಿದ್ದೂ ವ್ಯರ್ಥವೋ?</verse>
				<verse number="14">ಏಕೆಂದರೆ ನಾನು ದಿನವೆಲ್ಲಾ ಬಾಧೆಪಡುತ್ತಿದ್ದೇನೆ. ಪ್ರತಿ ಉದಯವೂ ನನಗೆ ಹೊಸ ಶಿಕ್ಷೆಯಾಗುತ್ತಿದೆ.</verse>
				<verse number="15">ನಾನು ಈ ಪ್ರಕಾರ ಬಾಯಿತೆರೆದು ಮಾತಾಡಿದ್ದರೆ, ನಿಮ್ಮ ಪ್ರಜೆಗೆ ದ್ರೋಹಿಯಾಗುತ್ತಿದ್ದೆನು.</verse>
				<verse number="16">ಇದನ್ನೆಲ್ಲಾ ತಿಳಿದುಕೊಳ್ಳುವುದಕ್ಕೆ ನಾನು ಪ್ರಯತ್ನಿಸಿದಾಗ, ಅದು ನನಗೆ ಬಹಳವಾಗಿ ಕಷ್ಟಕರವಾಗಿತ್ತು.</verse>
				<verse number="17">ನಾನು ದೇವರ ಪರಿಶುದ್ಧ ಆಲಯಕ್ಕೆ ಬರುವವರೆಗೆ ನನಗೆ ಅರ್ಥವಾಗಲಿಲ್ಲ. ಅನಂತರ ಅವರ ಅಂತ್ಯವನ್ನು ನನಗೆ ಅರ್ಥವಾಯಿತು.</verse>
				<verse number="18">ನಿಶ್ಚಯವಾಗಿ ನೀವು ಜಾರುವ ಸ್ಥಳಗಳಲ್ಲಿ ಅವರನ್ನು ಬಿಟ್ಟಿದ್ದೀರಿ. ಅವರನ್ನು ದಂಡಿಸಿಬಿಡು.</verse>
				<verse number="19">ಕ್ಷಣಮಾತ್ರದಲ್ಲಿ ಅವರು ನಾಶವಾದರು. ಅವರು ದಿಗಿಲುಬಿದ್ದು ಸಂಪೂರ್ಣವಾಗಿ ನಾಶವಾದರು.</verse>
				<verse number="20">ಅವರು ನಿದ್ದೆಯಿಂದ ಎಚ್ಚರಗೊಂಡ ಕನಸಿನಂತೆ ಇರುತ್ತಾರೆ. ಯೆಹೋವ ದೇವರೇ, ನಿಮ್ಮ ದೃಷ್ಟಿಯಲ್ಲಿ ಅವರು ಅಲ್ಪರಾಗಿರಲಿ.</verse>
				<verse number="21">ನನ್ನ ಹೃದಯವು ದುಃಖಗೊಂಡು, ನನ್ನ ಆತ್ಮವು ಕಹಿಗೊಂಡಿತು.</verse>
				<verse number="22">ಆಗ ನಾನು ಮೂರ್ಖನಾಗಿ ಏನೂ ತಿಳಿಯದೆ ನಿಮ್ಮ ಮುಂದೆ ಪಶುವಿನಂತೆ ಇದ್ದೆನು.</verse>
				<verse number="23">ಆದರೂ ನಾನು ನಿಮ್ಮ ಸಂಗಡ ಯಾವಾಗಲೂ ಇದ್ದೇನೆ. ನೀವು ನನ್ನ ಬಲಗೈಯನ್ನು ಹಿಡಿದಿದ್ದೀರಿ.</verse>
				<verse number="24">ನಿಮ್ಮ ಆಲೋಚನೆಯಂತೆ ನನ್ನನ್ನು ನಡೆಸಿ, ತರುವಾಯ ಮಹಿಮೆಗೆ ನನ್ನನ್ನು ಸೇರಿಸುವಿರಿ.</verse>
				<verse number="25">ಪರಲೋಕದಲ್ಲಿ ನನಗೆ ನೀವಲ್ಲದೆ ಮತ್ಯಾರಿದ್ದಾರೆ? ಇಹಲೋಕದಲ್ಲಿ ನಿಮ್ಮನ್ನಲ್ಲದೆ ಇನ್ನಾರನ್ನೂ ನಾನು ಬಯಸುವುದಿಲ್ಲ.</verse>
				<verse number="26">ನನ್ನ ತನುಮನಗಳು ಕುಂದುತ್ತವೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ, ನನ್ನ ಪಾಲೂ ಆಗಿದ್ದಾರೆ.</verse>
				<verse number="27">ದೇವರೇ, ನಿಮ್ಮಿಂದ ದೂರವಾಗಿರುವವರು ನಾಶವಾಗುತ್ತಾರೆ; ನಿಮ್ಮನ್ನು ಬಿಟ್ಟು ದ್ರೋಹ ಮಾಡುವವರೆಲ್ಲರೂ ದಂಡನೆಗೆ ಗುರಿಯಾಗುವರು.</verse>
				<verse number="28">ನನಗಾದರೋ ದೇವರ ಸಮೀಪಕ್ಕೆ ಬರುವುದೇ ಒಳ್ಳೆಯದು. ನಿಮ್ಮ ಕ್ರಿಯೆಗಳನ್ನೆಲ್ಲಾ ಸಾರುವುದಕ್ಕೆ ಸಾರ್ವಭೌಮ ಯೆಹೋವ ದೇವರಲ್ಲಿ ನನ್ನ ಭರವಸೆಯನ್ನು ಇಟ್ಟಿದ್ದೇನೆ.</verse>
			</chapter>
			<chapter number="74">
				<verse number="1">ದೇವರೇ, ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಟ್ಟದ್ದೇಕೆ? ನಿಮ್ಮ ಮೇವಿನ ಕುರಿಮಂದೆಯ ವಿಷಯವಾಗಿ ಬೇಸರಗೊಳ್ಳುವುದು ಏಕೆ?</verse>
				<verse number="2">ಪೂರ್ವಕಾಲದಲ್ಲಿ ನೀವು ಕೊಂಡುಕೊಂಡ ನಿಮ್ಮ ಜನರನ್ನೂ ನೀವು ವಿಮೋಚಿಸಿದ ನಿಮ್ಮ ಬಾಧ್ಯತೆಯನ್ನೂ ನೀವು ವಾಸಮಾಡಿದ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೊಳ್ಳಿರಿ.</verse>
				<verse number="3">ನಿತ್ಯ ನಾಶವಾದ ಈ ಪ್ರದೇಶಗಳ ಕಡೆಗೂ ಈ ಪರಿಶುದ್ಧ ನಿವಾಸವನ್ನು ವೈರಿಗಳು ಹಾಳುಮಾಡಿದ್ದರ ಕಡೆಗೂ ನಿಮ್ಮ ಹೆಜ್ಜೆಗಳನ್ನು ತಿರುಗಿಸಿರಿ.</verse>
				<verse number="4">ನಿಮ್ಮ ವೈರಿಗಳು ನೀವು ನಮ್ಮನ್ನು ಸಂಧಿಸಿದ ಸ್ಥಳದಲ್ಲಿ ಗರ್ಜಿಸುತ್ತಾರೆ. ತಮ್ಮ ಗುರುತುಗಳನ್ನು ಆರಾಧನಾ ಚಿಹ್ನೆಗಳಾಗಿ ಇಟ್ಟಿದ್ದಾರೆ.</verse>
				<verse number="5">ದಟ್ಟವಾದ ಮರಗಳ ಮಧ್ಯೆ ಕೊಡಲಿ ಎತ್ತುವವನ ಹಾಗೆ ಆ ಜನರು ವರ್ತಿಸಿದ್ದಾರೆ.</verse>
				<verse number="6">ಈಗ ಚಿತ್ರ ಕೆಲಸಗಳನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆಯಿಂದಲೂ ಅವರು ಹೊಡೆದು ಹಾಕುತ್ತಿದ್ದಾರೆ.</verse>
				<verse number="7">ನಿಮ್ಮ ಪರಿಶುದ್ಧ ಸ್ಥಳಕ್ಕೆ ಬೆಂಕಿಹಚ್ಚಿದ್ದಾರೆ. ನಿಮ್ಮ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಅಪವಿತ್ರಗೊಳಿಸಿದ್ದಾರೆ.</verse>
				<verse number="8">“ಅವುಗಳನ್ನು ಒಟ್ಟಾಗಿ ಕೆಡವಿಬಿಡೋಣ,” ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಟ್ಟಿದ್ದಾರೆ.</verse>
				<verse number="9">ದೇವರಿಂದ ನಮಗೆ ಅದ್ಭುತವಾದ ಸಂಕೇತಗಳು ಕೊಟ್ಟಿರುವುದಿಲ್ಲ. ಪ್ರವಾದಿಗಳು ನಮಗೆ ಉಳಿದಿರುವುದಿಲ್ಲ. ಇದು ಎಷ್ಟು ಕಾಲ ಎಂದು ನಾವ್ಯಾರೂ ತಿಳಿದಿರುವುದಿಲ್ಲ.</verse>
				<verse number="10">ದೇವರೇ, ವೈರಿಯು ನಿಂದಿಸುವುದು ಎಷ್ಟರವರೆಗೆ? ಶತ್ರುವು ನಿಮ್ಮ ಹೆಸರನ್ನು ಎಂದೆಂದಿಗೂ ದೂಷಿಸುವನೋ?</verse>
				<verse number="11">ಏಕೆ ನಿಮ್ಮ ಕೈಯನ್ನು, ನಿಮ್ಮ ಬಲಗೈಯನ್ನು ಸಹ ಹಿಂದೆಳೆಯುತ್ತೀರಿ? ನಿಮ್ಮ ಎದೆಯೊಳಗಿಂದ ಅದನ್ನು ಹೊರಗೆ ತೆಗೆದು ಅವರನ್ನು ದಂಡಿಸಿರಿ.</verse>
				<verse number="12">ದೇವರೇ, ನೀವು ಪೂರ್ವದಿಂದಲೂ ನನ್ನ ಅರಸರಾಗಿದ್ದೀರಿ. ಭೂಲೋಕಕ್ಕೆ ರಕ್ಷಣೆಯನ್ನು ತರುವವರೂ ನೀವೇ ಆಗಿದ್ದೀರಿ.</verse>
				<verse number="13">ನೀವು ನಿಮ್ಮ ಬಲದಿಂದ ಸಮುದ್ರವನ್ನು ವಿಭಾಗಿಸಿದ್ದೀರಿ. ತಿಮಿಂಗಿಲಗಳ ತಲೆಗಳನ್ನು ನೀರಿನಲ್ಲಿ ಬಡಿಸಿದ್ದೀರಿ.</verse>
				<verse number="14">ನೀವು ಲಿವ್ಯಾತಾನ ಮೃಗದ ತಲೆಗಳನ್ನು ಬಡೆದಿರಲು ಅದನ್ನು ಮರುಭೂಮಿಯ ಜೀವಜಂತುಗಳಿಗೆ ಆಹಾರವಾಗಿ ಕೊಟ್ಟಿದ್ದೀರಿ.</verse>
				<verse number="15">ನೀವು ಬುಗ್ಗೆಯನ್ನೂ, ಪ್ರವಾಹವನ್ನೂ ವಿಭಾಗ ಮಾಡಿದ್ದೀರಿ. ನೀವು ಯಾವಾಗಲೂ ತುಂಬಿ ಹರಿಯುವ ನದಿಗಳನ್ನು ಒಣಗಿಸಿದ್ದೀರಿ.</verse>
				<verse number="16">ಹಗಲು ನಿಮ್ಮದು, ರಾತ್ರಿಯು ಸಹ ನಿಮ್ಮದು. ನೀವು ಸೂರ್ಯಚಂದ್ರನನ್ನೂ ಸ್ಥಾಪಿಸಿದ್ದೀರಿ.</verse>
				<verse number="17">ನೀವು ಭೂಮಿಯ ಮೇರೆಗಳನ್ನೆಲ್ಲಾ ನಿರ್ಣಯಿಸಿದ್ದೀರಿ. ಬೇಸಿಗೆ ಮತ್ತು ಚಳಿಗಾಲವನ್ನು ನೀವು ನಿರ್ಮಿಸಿದ್ದೀರಿ.</verse>
				<verse number="18">ಮೂರ್ಖರು ನಿಮ್ಮ ನಾಮವನ್ನು ನಿಂದಿಸುತ್ತಾರೆ. ಶತ್ರುಗಳು ನಿಮ್ಮನ್ನು ಹಾಸ್ಯಮಾಡುತ್ತಾರೆ. ಯೆಹೋವ ದೇವರೇ, ಇದನ್ನು ಜ್ಞಾಪಕಮಾಡಿಕೊಳ್ಳಿರಿ.</verse>
				<verse number="19">ನಿಮ್ಮ ಪಾರಿವಾಳದ ಪ್ರಾಣವನ್ನು ದುಷ್ಟಮೃಗಗಳಿಗೆ ಒಪ್ಪಿಸಕೊಡಬೇಡಿರಿ. ನಿಮ್ಮ ದೀನರ ಮಂಡಳಿಯನ್ನು ಸದಾಕಾಲಕ್ಕೆ ಮರೆತುಬಿಡಬೇಡಿರಿ.</verse>
				<verse number="20">ಒಡಂಬಡಿಕೆಗೆ ಗೌರವವನ್ನು ಕೊಡಿರಿ. ಏಕೆಂದರೆ ಭೂಮಿಯ ಕತ್ತಲಿನ ಸ್ಥಳಗಳು ಕ್ರೂರತನದ ನಿವಾಸಗಳಿಂದ ತುಂಬಿ ಇವೆ.</verse>
				<verse number="21">ಕುಗ್ಗಿದವನು ಅವಮಾನದಿಂದ ಹಿಂದಿರುಗದಿರಲಿ. ದೀನನೂ, ಬಡವನೂ ನಿಮ್ಮ ಹೆಸರನ್ನು ಸ್ತುತಿಸಲಿ.</verse>
				<verse number="22">ದೇವರೇ, ಏಳು; ನಿಮ್ಮ ನ್ಯಾಯವನ್ನು ವಾದಿಸಿರಿ. ದಿನವೆಲ್ಲಾ ಮೂರ್ಖನು ನಿಮ್ಮನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪಕಮಾಡಿಕೊಳ್ಳಿರಿ.</verse>
				<verse number="23">ನಿಮ್ಮ ವೈರಿಗಳ ಗದ್ದಲವನ್ನೂ ನಿಮ್ಮ ವಿರೋಧಿಗಳ ಆಕ್ರೋಶ ನಿರಂತರವಾಗಿ ಬೆಳೆಯುವ ಕಲಹವನ್ನೂ ಮರೆತುಬಿಡಬೇಡಿರಿ.</verse>
			</chapter>
			<chapter number="75">
				<verse number="1">ನಿಮ್ಮನ್ನು ಕೊಂಡಾಡುತ್ತೇವೆ; ದೇವರೇ, ನಿಮ್ಮನ್ನು ಕೊಂಡಾಡುತ್ತೇವೆ; ಏಕೆಂದರೆ ಜನರು ನಿಮ್ಮ ನಾಮವನ್ನು ಜಪಿಸಿ, ನಿಮ್ಮ ಅದ್ಭುತಗಳನ್ನು ಕುರಿತು ಹೇಳುತ್ತಾರೆ.</verse>
				<verse number="2">“ನಿಯಮಿತ ಸಮಯವನ್ನು ಆಯ್ದುಕೊಳ್ಳುವೆನು. ನ್ಯಾಯಕ್ಕೆ ಸರಿಯಾಗಿ ನ್ಯಾಯತೀರಿಸುವೆನು,</verse>
				<verse number="3">ಭೂಮಿಯೂ ಅದರ ನಿವಾಸಿಗಳೆಲ್ಲರೂ ಬೆರಗಾಗಿದ್ದಾರೆ. ನಾನು ಅದರ ಸ್ತಂಭಗಳನ್ನು ನಿಲ್ಲಿಸಿದ್ದೇನೆ.</verse>
				<verse number="4">‘ಅಹಂಕಾರದಿಂದ ವರ್ತಿಸಬೇಡಿರಿ,’ ಎಂದು ಅಹಂಕಾರಿಗೆ ಹೇಳುತ್ತೇನೆ. ‘ನಿಮ್ಮ ಕೊಂಬು ಎತ್ತಬೇಡಿರಿ,’ ಎಂದು ದುಷ್ಟರಿಗೆ ಹೇಳುವೆನು.</verse>
				<verse number="5">ನಿಮ್ಮ ಕೊಂಬನ್ನು ಪರಲೋಕದ ಕಡೆಗೆ ಎತ್ತಬೇಡಿರಿ. ಹಟಮಾರಿತನದಿಂದ ಮಾತನಾಡಬೇಡಿರಿ,” ಎಂದು ನೀವು ಹೇಳಿದ್ದೀರಿ.</verse>
				<verse number="6">ಏಕೆಂದರೆ ಉದ್ಧಾರವು ಪೂರ್ವದಿಂದಲೂ ಪಶ್ಚಿಮದಿಂದಲೂ ಅಲ್ಲ, ಇಲ್ಲವೆ ದಕ್ಷಿಣದ ಮರುಭೂಮಿಯಿಂದಲೂ ಬರುವುದಿಲ್ಲ.</verse>
				<verse number="7">ಆದರೆ ದೇವರು ನ್ಯಾಯತೀರಿಸುವವರಾಗಿದ್ದಾರೆ. ದೇವರು ಒಬ್ಬನನ್ನು ತಗ್ಗಿಸುತ್ತಾರೆ, ಒಬ್ಬನನ್ನು ಎತ್ತುತ್ತಾರೆ.</verse>
				<verse number="8">ಯೆಹೋವ ದೇವರ ಕೈಯಲ್ಲಿ ಒಂದು ಪಾತ್ರೆಯು ಇದೆ. ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿ ಇದೆ. ಅದನ್ನು ಅವರು ಹೊಯ್ಯುತ್ತಾರೆ. ಅದರ ಮಡ್ಡಿಯನ್ನು ಸಹ ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.</verse>
				<verse number="9">ನಾನಾದರೋ ಸದಾ ವರ್ಣಿಸುವವನಾಗಿ ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುವೆನು.</verse>
				<verse number="10">ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಹೋಗುವುದು. ಆದರೆ ನೀತಿವಂತನ ಕೊಂಬುಗಳು ಎತ್ತಲಾಗುವುದು.</verse>
			</chapter>
			<chapter number="76">
				<verse number="1">ಯೆಹೂದ ಪ್ರದೇಶದಲ್ಲಿ ದೇವರು ಸುಪ್ರಸಿದ್ಧರಾಗಿದ್ದಾರೆ. ಇಸ್ರಾಯೇಲಿನಲ್ಲಿ ದೇವರ ಹೆಸರು ಪ್ರಖ್ಯಾತವಾಗಿದೆ.</verse>
				<verse number="2">ಸಾಲೇಮಿನಲ್ಲಿ ದೇವರ ಗುಡಾರವೂ ಚೀಯೋನಿನಲ್ಲಿ ಅವರ ವಾಸಸ್ಥಾನವೂ ಉಂಟು.</verse>
				<verse number="3">ದೇವರು ಅಲ್ಲಿಯೇ ಬಿಲ್ಲಿನ ಉರಿಬಾಣಗಳನ್ನೂ ಗುರಾಣಿಯನ್ನೂ ಖಡ್ಗವನ್ನೂ ಯುದ್ಧಾಯುಧಗಳನ್ನು ಮುರಿದುಬಿಟ್ಟರು.</verse>
				<verse number="4">ನೀವು ಪ್ರಕಾಶಮಾನ ಬೆಳಕಿಗಿಂತ ಪ್ರಕಾಶಮಾನವಾಗಿರುತ್ತೀರಿ, ನೈಸರ್ಗಿಕ ಸಂಪತ್ತು ತುಂಬಿದ ಪರ್ವತಗಳಿಗಿಂತ ಹೆಚ್ಚು ಶ್ರೇಷ್ಠ ಆಗಿದ್ದೀರಿ.</verse>
				<verse number="5">ಧೀರಹೃದಯದವರು ಸುಲಿಗೆಯಾಗಿ, ಅಂತಿಮ ನಿದ್ರೆ ಹೊಂದಿದ್ದಾರೆ. ಪರಾಕ್ರಮಿಗಳಲ್ಲಿ ಒಬ್ಬನೂ ತನ್ನ ಕೈಗಳನ್ನೆತ್ತಲು ಶಕ್ತನಲ್ಲ.</verse>
				<verse number="6">ಯಾಕೋಬನ ದೇವರೇ, ನಿಮ್ಮ ಗದರಿಕೆಯಿಂದ ರಥವೂ ಕುದುರೆಯೂ ಚಲನೆಯಿಲ್ಲದೆ ಬಿದ್ದಿವೆ.</verse>
				<verse number="7">ನೀವು ಭಯಭಕ್ತಿಗೆ ಪಾತ್ರರು, ನೀವು ಒಂದು ಸಾರಿ ಬೇಸರಗೊಂಡರೆ, ನಿಮ್ಮ ಮುಂದೆ ನಿಲ್ಲುವವನ್ಯಾರು?</verse>
				<verse number="8">ಪರಲೋಕದಿಂದ ನ್ಯಾಯ ನಿರ್ಣಯವನ್ನು ಮಾಡಿದ್ದೀರಿ. ದೇವರೇ, ನ್ಯಾಯತೀರಿಸುವುದಕ್ಕೂ</verse>
				<verse number="9">ಭೂಮಿಯ ದೀನರೆಲ್ಲರನ್ನು ರಕ್ಷಿಸುವುದಕ್ಕೂ ನೀವು ಪ್ರಾರಂಭಿಸುವಾಗ ಭೂಮಿಯು ಭಯಗೊಂಡು ಮೌನವಾಯಿತು.</verse>
				<verse number="10">ಮನುಷ್ಯರ ವಿರುದ್ಧ ನಿಮ್ಮ ಕೋಪವು ನಿಮಗೆ ಘನವನ್ನು ತರುವುದು. ಉಳಿದಿರುವವರು ಕೋಪಕ್ಕೆ ತುತ್ತಾಗುವುದಿಲ್ಲ.</verse>
				<verse number="11">ನಿಮ್ಮ ದೇವರಾದ ಯೆಹೋವ ದೇವರಿಗೆ ಹರಕೆಮಾಡಿ ಸಲ್ಲಿಸಿರಿ. ದೇವರ ಸುತ್ತಲಿರುವವರೆಲ್ಲರು ಭಯಭಕ್ತಿಗೆ ಪಾತ್ರರಾದವರಿಗೆ ಕಾಣಿಕೆಗಳನ್ನು ತರಲಿ.</verse>
				<verse number="12">ದೇವರು ಅಧಿಕಾರಿಗಳ ಗರ್ವವನ್ನು ಮುರಿಯುತ್ತಾರೆ. ಭೂಲೋಕದ ಅರಸರು ದೇವರಿಗೆ ಭಯಪಡುತ್ತಾರೆ.</verse>
			</chapter>
			<chapter number="77">
				<verse number="1">ನನ್ನ ಸಹಾಯಕ್ಕಾಗಿ ದೇವರ ಕಡೆಗೆ ಕೂಗುತ್ತೇನೆ. ಹೌದು, ನನ್ನ ಸ್ವರದಿಂದ ದೇವರ ಕಡೆಗೆ ಕೂಗುತ್ತೇನೆ, ನನಗೆ ದೇವರು ಕಿವಿಗೊಡುವರು.</verse>
				<verse number="2">ನನ್ನ ಇಕ್ಕಟ್ಟಿನ ದಿವಸದಲ್ಲಿ ಯೆಹೋವ ದೇವರನ್ನು ಹುಡುಕಿದೆನು. ನಾನು ರಾತ್ರಿಯೆಲ್ಲಾ ಬೇಸರವಿಲ್ಲದೆ ಕೈಚಾಚಿದೆ. ನನ್ನ ಮನಸ್ಸಿಗೆ ಶಾಂತಿ ಇರಲಿಲ್ಲ.</verse>
				<verse number="3">ನಾನು ವ್ಯಥೆಪಡುತ್ತಿರುವಾಗ, ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿಸುವುದರಿಂದ ನನ್ನ ಆತ್ಮವು ಬಳಲಿ ಹೋಯಿತು.</verse>
				<verse number="4">ನನ್ನ ಕಣ್ಣುಗಳನ್ನು ಮುಚ್ಚದಿರುವಾಗ, ನಾನು ಮಾತನಾಡಲಾರದಂತೆ ಕಳವಳಪಟ್ಟೆನು.</verse>
				<verse number="5">ಪೂರ್ವದ ದಿವಸಗಳನ್ನೂ ಆದಿಕಾಲದ ವರ್ಷಗಳನ್ನೂ ಯೋಚಿಸಿದೆ.</verse>
				<verse number="6">ನನ್ನ ಹಾಡನ್ನು ರಾತ್ರಿಯಲ್ಲಿ ಜ್ಞಾಪಕಮಾಡಿಕೊಂಡೆನು. ನನ್ನ ಹೃದಯದಲ್ಲಿ ನಾನು ಧ್ಯಾನ ಮಾಡಿದೆ. ನನ್ನ ಆತ್ಮದಲ್ಲಿ ಪ್ರಶ್ನೆ ಹೀಗೆ ಮೂಡುತ್ತಿತ್ತು:</verse>
				<verse number="7">“ನಿರಂತರವಾಗಿ ಯೆಹೋವ ದೇವರು ತಳ್ಳಿಬಿಡುವರೋ? ಇನ್ನೆಂದಿಗೂ ದಯೆತೋರದೆ ಇರುವರೋ?</verse>
				<verse number="8">ದೇವರ ಒಡಂಬಡಿಕೆಯ ಪ್ರೀತಿಯು ಸದಾಕಾಲಕ್ಕೆ ನಿಂತು ಹೋಯಿತೋ? ತಲತಲಾಂತರಕ್ಕೂ ವಾಗ್ದಾನ ಮುಗಿದು ಹೋಯಿತೋ?</verse>
				<verse number="9">ದೇವರು ಕರುಣಿಸುವುದನ್ನು ಮರೆತು ಬಿಟ್ಟಿದ್ದಾರೋ? ತಮ್ಮ ಅಂತಃಕರಣವನ್ನು ಬೇಸರದಿಂದ ತಡೆಹಿಡಿದಿದ್ದಾರೋ?”</verse>
				<verse number="10">ನಂತರ ನಾನು ಯೋಚಿಸಿದ್ದೇನಂದರೆ, “ಹೀಗೆ ನೆನಸಿದ್ದು ನನ್ನ ಬಲಹೀನತೆಯೇ. ಮಹೋನ್ನತ ದೇವರ ಬಲಗೈಯ ಪರಾಕ್ರಮದ ವರ್ಷಗಳನ್ನು ನಾನು ಸ್ಮರಿಸುವೆನು.</verse>
				<verse number="11">ಯೆಹೋವ ದೇವರ ಕ್ರಿಯೆಗಳನ್ನು ಜ್ಞಾಪಕಮಾಡಿಕೊಳ್ಳುವೆನು. ಹೌದು, ಆದಿಯಿಂದಲೂ ನೀವು ನಡೆಸಿದ ಅದ್ಭುತಗಳನ್ನು ನೆನಪುಮಾಡಿಕೊಳ್ಳುವೆನು.</verse>
				<verse number="12">ನಿಮ್ಮ ಮಹಾಕಾರ್ಯಗಳನ್ನೆಲ್ಲಾ ಧ್ಯಾನಿಸುವೆನು, ನಿಮ್ಮ ಕೃತ್ಯಗಳನ್ನು ಯೋಚಿಸುವೆನು.”</verse>
				<verse number="13">ದೇವರೇ, ನಿಮ್ಮ ಮಾರ್ಗಗಳು ಪರಿಶುದ್ಧವಾದವುಗಳು. ನಮ್ಮ ದೇವರ ಹಾಗೆ ಮಹಾ ದೇವರು ಯಾರು?</verse>
				<verse number="14">ಅದ್ಭುತಗಳನ್ನು ಮಾಡುವ ದೇವರು ನೀವೇ. ಜನರಲ್ಲಿ ನಿಮ್ಮ ಬಲವನ್ನು ತಿಳಿಯಮಾಡಿದ್ದೀರಿ.</verse>
				<verse number="15">ಯಾಕೋಬನ ಮತ್ತು ಯೋಸೇಫನ ಸಂತತಿಯವರಾದ ನಿಮ್ಮ ಜನರನ್ನು ನಿಮ್ಮ ಬಲವಾದ ತೋಳಿನಿಂದ ವಿಮೋಚಿಸಿದ್ದೀರಿ.</verse>
				<verse number="16">ಜಲರಾಶಿಗಳು ನಿಮ್ಮನ್ನು ಕಂಡವು. ದೇವರೇ, ಜಲರಾಶಿಗಳು ನಿಮ್ಮನ್ನು ಕಂಡು ಹೊರಳಾಡಿದವು. ಅಗಾಧ ಸಾಗರಗಳು ಅಲ್ಲಕಲ್ಲೋಲವಾದವು.</verse>
				<verse number="17">ಮೋಡಗಳು ನೀರನ್ನು ಸುರಿಸಿದವು. ಆಕಾಶಗಳು ಗುಡುಗಿನಿಂದ ಶಬ್ದಮಾಡಿದವು. ನಿಮ್ಮ ಬಾಣಗಳು ಹಿಂದೆಯೂ ಮುಂದೆಯೂ ಹಾರಿ ಬಂದವು.</verse>
				<verse number="18">ನಿಮ್ಮ ಗುಡುಗಿನ ಶಬ್ದವು ಸುಂಟರಗಾಳಿಯಲ್ಲಿ ಕೇಳುತ್ತಿತ್ತು. ಮಿಂಚುಗಳು ಜಗತ್ತನ್ನು ಬೆಳಗಿಸಿದವು. ಭೂಮಿಯು ನಡುಗಿ ಕದಲಿತು.</verse>
				<verse number="19">ನೀವು ಸಮುದ್ರದಲ್ಲಿ ಮಾರ್ಗಮಾಡಿದಿರಿ. ಮಹಾಜಲರಾಶಿಗಳನ್ನು ದಾಟಿದಿರಿ. ಆದರೂ ನಿಮ್ಮ ಹೆಜ್ಜೆಯ ಗುರುತು ಕಾಣಲಿಲ್ಲ.</verse>
				<verse number="20">ಮೋಶೆ ಆರೋನರ ಕೈಯಿಂದ ನಿಮ್ಮ ಜನರನ್ನು ಮಂದೆಯ ಹಾಗೆ ನಡೆಸಿದಿರಿ.</verse>
			</chapter>
			<chapter number="78">
				<verse number="1">ನನ್ನ ಜನರೇ, ನನ್ನ ಬೋಧನೆಗೆ ಕಿವಿಗೊಡಿರಿ; ನನ್ನ ಬಾಯಿ ಮಾತುಗಳನ್ನು ಲಾಲಿಸಿರಿ.</verse>
				<verse number="2">ನಾನು ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು. ಪೂರ್ವದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.</verse>
				<verse number="3">ಅವುಗಳನ್ನು ನಾವು ಕೇಳಿ ತಿಳಿದಿದ್ದೇವೆ. ನಮ್ಮ ಪಿತೃಗಳು ನಮಗೆ ವಿವರಿಸಿದರು.</verse>
				<verse number="4">ನಾವು ಸಹ ಯೆಹೋವ ದೇವರ ಸ್ತೋತ್ರಗಳನ್ನೂ ಅವರ ಶಕ್ತಿಯನ್ನೂ ದೇವರು ಮಾಡಿದ ಅದ್ಭುತಗಳನ್ನೂ ನಮ್ಮ ಮಕ್ಕಳಿಗೆ ವಿವರಿಸುವೆವು. ನಮ್ಮ ಮಕ್ಕಳು ಮುಂದಿನ ತಲೆಮಾರಿಗೆ ಮರೆಮಾಡದಿರುವರು.</verse>
				<verse number="5">ಅವರು ಯಾಕೋಬ ವಂಶದಲ್ಲಿ ಶಾಸನಗಳನ್ನು ಸ್ಥಾಪಿಸಿ, ಇಸ್ರಾಯೇಲಿನಲ್ಲಿ ನಿಯಮವನ್ನು ಇಟ್ಟು, ಹಿರಿಯರಿಗೆ ಆಜ್ಞಾಪಿಸಿದ್ದೇನೆಂದರೆ, ಅವುಗಳನ್ನು ನಿಮ್ಮ ಮಕ್ಕಳಿಗೆ ಹೇಳಿಕೊಡಿರಿ,</verse>
				<verse number="6">ಇದರಿಂದ ಮುಂದಿನ ತಲೆಮಾರಿಗೆ ವಾಕ್ಯವು ಗೊತ್ತಾಗಿ, ಅವರ ಮಕ್ಕಳು ಅವುಗಳನ್ನು ತಮ್ಮ ಮಕ್ಕಳು ಮೊಮ್ಮಕ್ಕಳಿಗೆ ತಿಳಿಸುತ್ತಾ ಹೋಗುವರು.</verse>
				<verse number="7">ಆಗ ಅವರು ದೇವರಲ್ಲಿ ತಮ್ಮ ಭರವಸೆ ಇಡುವರು. ಮತ್ತು ದೇವರ ಕ್ರಿಯೆಗಳನ್ನು ಮರೆತು ಬಿಡದೆ ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವರು.</verse>
				<verse number="8">ಆಗ ಅವರು ತಮ್ಮ ಪಿತೃಗಳ ಹಾಗೆ ಹಟಮಾರಿ ಮತ್ತು ದಂಗೆಕೋರ ಸಂತತಿಯವರು ಆಗಿರುವುದಿಲ್ಲ, ಅವರ ಹೃದಯವು ದೇವರಿಗೆ ಸತ್ಯವಾಗಿರಲಿಲ್ಲ, ಅವರ ಆತ್ಮವು ದೇವರಲ್ಲಿ ನಂಬಿಗಸ್ತಿಕೆಯಿಂದಲೂ ಇರಲಿಲ್ಲ.</verse>
				<verse number="9">ಎಫ್ರಾಯೀಮನ ಮಕ್ಕಳು ಆಯುಧಗಳನ್ನು ಧರಿಸಿ, ಬಿಲ್ಲುಗಳನ್ನು ಹೊತ್ತುಕೊಂಡಿದ್ದರೂ ಕಾಳಗದ ದಿವಸದಲ್ಲಿ ಹಿಂತಿರುಗಿಕೊಂಡರು.</verse>
				<verse number="10">ಅವರು ದೇವರ ಒಡಂಬಡಿಕೆಯನ್ನು ಕೈಗೊಳ್ಳಲಿಲ್ಲ. ದೇವರ ನಿಯಮದಲ್ಲಿ ನಡೆಯಲೊಲ್ಲದೆ ಇದ್ದರು.</verse>
				<verse number="11">ದೇವರು ಅವರಿಗೆ ತೋರಿಸಿದ ಕೃತ್ಯಗಳನ್ನೂ ದೇವರು ಮಾಡಿದ ಅದ್ಭುತಗಳನ್ನೂ ಮರೆತುಬಿಟ್ಟರು.</verse>
				<verse number="12">ದೇವರು ಪಿತೃಗಳ ಮುಂದೆ ಈಜಿಪ್ಟ್ ದೇಶದಲ್ಲಿ, ಚೋವನ್ ಬೈಲಿನಲ್ಲಿ ಅದ್ಭುತಗಳನ್ನು ಮಾಡಿದರು.</verse>
				<verse number="13">ದೇವರು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದರು. ನೀರನ್ನು ಗೋಡೆಯಾಗಿ ನಿಲ್ಲಿಸಿದರು.</verse>
				<verse number="14">ದೇವರು ಹಗಲಿನಲ್ಲಿ ಮೇಘದಿಂದಲೂ ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡೆಸಿದರು.</verse>
				<verse number="15">ಮರುಭೂಮಿಯಲ್ಲಿ ದೇವರು ಬಂಡೆಗಳನ್ನು ಸೀಳಿ, ಜನರಿಗೆ ಮಹಾ ಜಲಾಗಾಧಗಳ ಹಾಗೆ ನೀರನ್ನು ಕುಡಿಯಲು ಕೊಟ್ಟರು.</verse>
				<verse number="16">ಬಂಡೆಯೊಳಗಿಂದ ಹೊಳೆಗಳನ್ನು ಹೊರಗೆ ತಂದು, ನದಿಗಳನ್ನು ನೀರನ್ನು ಹರಿಯಮಾಡಿದರು.</verse>
				<verse number="17">ಆದರೆ ಜನರು ಇನ್ನೂ ದೇವರಿಗೆ ವಿರೋಧವಾಗಿ ಪಾಪಮಾಡಿ, ಮರುಭೂಮಿಯಲ್ಲಿ ಮಹೋನ್ನತರಿಗೆ ವಿರೋಧವಾಗಿ ಕೋಪವನ್ನೆಬ್ಬಿಸಿದರು.</verse>
				<verse number="18">ದೇವರನ್ನು ತಮ್ಮ ಹೃದಯದಲ್ಲಿ ಬೇಕೆಂದು ಪರೀಕ್ಷಿಸಿ, ತಮ್ಮ ದುರಾಶೆಗಳಿಗೋಸ್ಕರ ಆಹಾರವನ್ನು ಕೇಳಿದರು.</verse>
				<verse number="19">ಹೌದು, ಅವರು ದೇವರಿಗೆ ವಿರೋಧವಾಗಿ ಮಾತನಾಡಿ, “ದೇವರು ಅರಣ್ಯದಲ್ಲಿ ಭೋಜನವನ್ನು ಸಿದ್ಧ ಮಾಡಬಲ್ಲನೋ?</verse>
				<verse number="20">ಇಗೋ, ದೇವರು ಬಂಡೆಯನ್ನು ಹೊಡೆಯಲಾಗಿ, ನೀರು ಚಿಮ್ಮಿ ಹೊರಟಿತು. ಹಳ್ಳಗಳು ದಡಮೀರಿ ಹರಿದವು. ಅರಣ್ಯದಲ್ಲಿ, ರೊಟ್ಟಿಯನ್ನು ಸಹ ಕೊಡಬಲ್ಲನೋ? ತಮ್ಮ ಜನರಿಗೆ ಮಾಂಸವನ್ನು ಸಿದ್ಧಮಾಡುವನೋ?” ಎಂದರು.</verse>
				<verse number="21">ಯೆಹೋವ ದೇವರು ಇದನ್ನು ಕೇಳಿ ಬೇಸರಗೊಂಡರು. ಯಾಕೋಬ್ಯರಲ್ಲಿ ಬೆಂಕಿ ಹೊತ್ತಿತು. ಇಸ್ರಾಯೇಲರು ದಂಡನೆಗೆ ಒಳಗಾದರು.</verse>
				<verse number="22">ಏಕೆಂದರೆ ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ. ದೇವರ ರಕ್ಷಣೆಯಲ್ಲಿ ಭರವಸೆ ಇಡಲಿಲ್ಲ.</verse>
				<verse number="23">ಆದರೆ ದೇವರು ಮೇಲಿರುವ ಮೇಘಗಳಿಗೆ ಆಜ್ಞಾಪಿಸಿ, ಆಕಾಶದ ಕದಗಳನ್ನು ತೆರೆದರು.</verse>
				<verse number="24">ಉಣ್ಣುವುದಕ್ಕೆ ಮನ್ನವನ್ನು ಜನರ ಮೇಲೆ ಸುರಿಸಿ, ಪರಲೋಕದ ಧಾನ್ಯವನ್ನು ಅವರಿಗೆ ಕೊಟ್ಟರು.</verse>
				<verse number="25">ದೇವದೂತರ ಆಹಾರವನ್ನು ಮಾನವರು ತಿಂದರು. ದೇವರು ಅವರಿಗೆ ಬೇಕಾದಷ್ಟು ಕಳುಹಿಸಿದರು.</verse>
				<verse number="26">ಮೂಡಣ ಗಾಳಿಯನ್ನು ಆಕಾಶದಲ್ಲಿ ಹುಟ್ಟಿಸಿ, ತಮ್ಮ ಶಕ್ತಿಯಿಂದ ದಕ್ಷಿಣ ಗಾಳಿಯನ್ನು ಬರಮಾಡಿದರು.</verse>
				<verse number="27">ಧೂಳಿನಂತೆ ಮಾಂಸವನ್ನು ಸುರಿಸಿದರು. ಸಮುದ್ರದ ಮರಳಿನಂತೆ ಪಕ್ಷಿಗಳನ್ನೂ ಅವರ ಮೇಲೆ ಸುರಿಸಿದರು.</verse>
				<verse number="28">ಅವರ ಮಧ್ಯದಲ್ಲಿಯೂ ಅವರ ಗುಡಾರಗಳ ಸುತ್ತಲೂ ಸುರಿಸಿದರು.</verse>
				<verse number="29">ಆಗ ಅವರು ತಿಂದು ಬಹಳ ತೃಪ್ತಿಗೊಂಡರು. ಅವರು ಆಶಿಸಿದ್ದನ್ನು ದೇವರು ಕೊಟ್ಟರು.</verse>
				<verse number="30">ಅವರು ತಮ್ಮ ಆಶೆಯನ್ನು ಬಿಡದೆ, ಅವರ ಊಟವು ಇನ್ನೂ ಅವರ ಬಾಯಿಯಲ್ಲಿ ಇರುವಾಗ,</verse>
				<verse number="31">ದೇವರ ಶಿಕ್ಷೆ ಅವರ ಮೇಲೆ ಬಿತ್ತು. ಅವರಲ್ಲಿ ಕೊಬ್ಬಿದವರು ಸತ್ತರು. ಇಸ್ರಾಯೇಲರ ಪ್ರಾಯಸ್ಥರು ಸಹ ಸತ್ತುಹೋದರು.</verse>
				<verse number="32">ಇದೆಲ್ಲಾ ಆದಾಗ್ಯೂ ಜನರು ಇನ್ನೂ ಪಾಪಮಾಡುತ್ತಿದ್ದರು. ದೇವರ ಅದ್ಭುತಗಳನ್ನು ಕಂಡರೂ ನಂಬಲಿಲ್ಲ.</verse>
				<verse number="33">ಆಗ ದೇವರು ಅವರ ದಿವಸಗಳನ್ನು ವ್ಯರ್ಥವಾಗಿಯೂ ಅವರ ವರ್ಷಗಳನ್ನು ಕಳವಳದಲ್ಲಿಯೂ ಕಳೆಯ ಹೋಗಲು ಅನುಮತಿಸಿದರು.</verse>
				<verse number="34">ದೇವರು ಜನರನ್ನು ದಂಡಿಸುವಾಗೆಲ್ಲಾ ಅವರು ದೇವರನ್ನು ಹುಡುಕಿದರು. ಆಸಕ್ತಿಯಿಂದ ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು.</verse>
				<verse number="35">ದೇವರು ತಮ್ಮ ಬಂಡೆ ಎಂದೂ ಮಹೋನ್ನತರಾದ ದೇವರು ತಮ್ಮ ವಿಮೋಚಕರೆಂದೂ ಜ್ಞಾಪಕ ಮಾಡಿಕೊಳ್ಳುತ್ತಿದ್ದರು.</verse>
				<verse number="36">ಆದರೂ ಅವರು ತಮ್ಮ ಬಾಯಿಗಳಿಂದ ದೇವರಿಗೆ ಮುಖಸ್ತುತಿ ಮಾಡಿ, ತಮ್ಮ ನಾಲಿಗೆಯಿಂದ ದೇವರನ್ನು ಸುಳ್ಳಾಗಿ ಹೋಗಳುತ್ತಿದ್ದರು.</verse>
				<verse number="37">ಅವರ ಹೃದಯವು ದೇವರ ಸಂಗಡ ಸ್ಥಿರವಾಗಿರಲಿಲ್ಲ. ಅವರು ದೇವರ ಒಡಂಬಡಿಕೆಯಲ್ಲಿ ನಂಬಿಗಸ್ತರಾಗಿರಲಿಲ್ಲ.</verse>
				<verse number="38">ಆದಾಗ್ಯೂ ದೇವರು ಅವರನ್ನು ಕರುಣಿಸಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಬಿಟ್ಟುಬಿಟ್ಟರು. ಹೌದು, ಅನೇಕ ಸಾರಿ ದೇವರು ಕೋಪಿಸಿಕೊಳ್ಳದಿದ್ದರು, ತಮ್ಮ ಬೇಸರವನ್ನು ದೇವರು ಪ್ರಯೋಗಿಸಲಿಲ್ಲ.</verse>
				<verse number="39">ಜನರು ಬರೀ ಮಾಂಸ ಮಾತ್ರದವರೂ ತಿರುಗಿಕೊಳ್ಳದೆ ಹೋಗುವ ಗಾಳಿಯೂ ಆಗಿದ್ದಾರೆಂದು ದೇವರು ಜ್ಞಾಪಕಮಾಡಿಕೊಂಡರು.</verse>
				<verse number="40">ಎಷ್ಟೋ ಸಾರಿ ಜನರು ಮರುಭೂಮಿಯಲ್ಲಿ ದೇವರಿಗೆ ಬೇಸರಮಾಡಿದರು. ಕಾಡಿನಲ್ಲಿ ದೇವರನ್ನು ದುಃಖಪಡಿಸಿದರು.</verse>
				<verse number="41">ಅವರು ತಿರುಗಿಬಿದ್ದು ದೇವರನ್ನು ಪರೀಕ್ಷಿಸಿದರು. ಇಸ್ರಾಯೇಲರ ಪರಿಶುದ್ಧರಿಗೆ ಬೇಸರಗೊಳಿಸಿದರು.</verse>
				<verse number="42">ದೇವರು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ ತಾವು ತೋರಿಸಿದ ಶಕ್ತಿಯನ್ನೂ ಅವರು ಸ್ಮರಿಸಲಿಲ್ಲ.</verse>
				<verse number="43">ಈಜಿಪ್ಟಿನಲ್ಲಿ ಆದ ಸೂಚಕಕಾರ್ಯಗಳನ್ನೂ, ಚೋವನ್ ಬಯಲಿನಲ್ಲಿ ನಡೆಸಿದ ಅದ್ಭುತಗಳನ್ನು ಮಾಡಿದ ದಿವಸವನ್ನೂ ಅವರು ಜ್ಞಾಪಕ ಮಾಡಿಕೊಳ್ಳಲಿಲ್ಲ.</verse>
				<verse number="44">ಅವರು ಕುಡಿಯಲಾರದ ಹಾಗೆ ಅವರ ನದಿಗಳು ರಕ್ತವಾದವು. ಅವರ ಹೊಳೆಗಳು ಸಹ ರಕ್ತವಾಗಿ ಮಾರ್ಪಟ್ಟವು.</verse>
				<verse number="45">ಅವರಲ್ಲಿ ವಿವಿಧ ಹುಳುಗಳು ಬಂದವು. ಅವು ಅವರನ್ನು ಹಾನಿಮಾಡಿದವು. ಕಪ್ಪೆಗಳು ಸಹ ಕಳುಹಿಸಲಾದವು. ಅವು ಸಹ ಅವರನ್ನು ಹಾನಿಮಾಡಿದವು.</verse>
				<verse number="46">ಅವರ ಬೆಳೆಗಳು ಕಂಬಳಿ ಹುಳುಗಳಿಗೂ ಅವರ ವ್ಯವಸಾಯ ಮಿಡತೆಗಳಿಗೂ ತುತ್ತಾದವು.</verse>
				<verse number="47">ಅವರ ದ್ರಾಕ್ಷಿಬಳ್ಳಿಗಳು ಕಲ್ಮಳೆಯಿಂದಲೂ ಅವರ ಅತ್ತಿಮರಗಳು ಮಂಜಿನಿಂದಲೂ ನಾಶವಾದವು.</verse>
				<verse number="48">ಅವರ ದನಗಳು ಕಲ್ಮಳೆಗೂ ಅವರ ಪಶುಗಳು ಸಿಡಿಲಿಗೂ ಒಳಪಟ್ಟವು.</verse>
				<verse number="49">ದೇವರು ನಾಶದ ದೇವದೂತರನ್ನು ಕಳುಹಿಸುತ್ತಾ ತಮ್ಮ ಬೇಸರದಿಂದಲೂ ದುಃಖದಿಂದಲೂ ಇಕ್ಕಟ್ಟುಗಳನ್ನೂ ಅವರ ಮೇಲೆ ಸುರಿಯಮಾಡಿದರು.</verse>
				<verse number="50">ತಮ್ಮ ಬೇಸರಕ್ಕೆ ದಾರಿಯನ್ನು ಮಾಡಿ, ಅವರನ್ನು ಪೂರ್ಣವಾಗಿ ದಂಡಿಸಿದರು. ಅವರ ಜೀವವನ್ನು ವ್ಯಾಧಿಗೆ ಒಪ್ಪಿಸಿಬಿಟ್ಟು,</verse>
				<verse number="51">ಈಜಿಪ್ಟಿನಲ್ಲಿ ಚೊಚ್ಚಲರೆಲ್ಲರನ್ನೂ, ಹಾಮನ ಗುಡಾರಗಳಲ್ಲಿ ಪುರುಷತ್ವದ ಪ್ರಥಮ ಫಲವನ್ನೂ ದಂಡಿಸಿದರು.</verse>
				<verse number="52">ಆದರೆ ದೇವರು ಮಂದೆಯ ಹಾಗೆ ತಮ್ಮ ಜನರನ್ನು ಹೊರತಂದು, ಕುರಿಗಳನ್ನು ನಡೆಸುವಂತೆ ಮರುಭೂಮಿಯಲ್ಲಿ ಅವರನ್ನು ನಡೆಸಿದರು.</verse>
				<verse number="53">ಜನರನ್ನು ಸುರಕ್ಷಿತವಾಗಿ ನಡೆಸಿದ ಕಾರಣ ಅವರು ಹೆದರಲಿಲ್ಲ. ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.</verse>
				<verse number="54">ಹೀಗೆ ದೇವರು ತಮ್ಮ ಭುಜಬಲದಿಂದ ಪವಿತ್ರ ನಾಡಿನ ತಮ್ಮ ಮೇರೆಗೂ, ಈ ಪರ್ವತ ನಾಡಿಗೂ ಅವರನ್ನು ಬರಮಾಡಿದರು.</verse>
				<verse number="55">ದೇವರು ಜನಾಂಗಗಳನ್ನು ಅವರ ಮುಂದೆ ಹೊರಗೆ ಹಾಕಿ, ಅವರ ಬಾಧ್ಯತೆಯನ್ನು ಹಂಚಿ, ಅವರ ಗುಡಾರಗಳಲ್ಲಿ ಇಸ್ರಾಯೇಲರನ್ನು ವಾಸಿಸುವಂತೆ ಮಾಡಿದರು.</verse>
				<verse number="56">ಆದರೆ ಜನರು ಮಹೋನ್ನತರಾದ ದೇವರನ್ನು ಪರೀಕ್ಷಿಸಿ ವಿರೋಧಿಸಿದರು; ದೇವರ ಶಾಸನಗಳನ್ನು ಅವರು ಕೈಗೊಳ್ಳಲಿಲ್ಲ.</verse>
				<verse number="57">ತಮ್ಮ ಪಿತೃಗಳ ಹಾಗೆ ಉಪಕಾರ ನೆನಸದೆ, ಅಪನಂಬಿಗಸ್ತರಾಗಿ ಮೋಸದ ಬಿಲ್ಲಿನ ಹಾಗೆ ಓರೆಯಾದರು.</verse>
				<verse number="58">ತಮ್ಮ ಉನ್ನತ ಸ್ಥಳಗಳಿಂದ ದೇವರಿಗೆ ಬೇಸರಗೊಳಿಸಿದರು. ತಮ್ಮ ಮೂರ್ತಿಗಳಿಂದ ದೇವರಿಗೆ ದುಃಖಪಡಿಸಿದರು.</verse>
				<verse number="59">ದೇವರು ಇದನ್ನು ಕಂಡಾಗ, ಬೇಸರಗೊಂಡು ಇಸ್ರಾಯೇಲನ್ನು ಪರಿಪೂರ್ಣವಾಗಿ ತಿರಸ್ಕರಿಸಿಬಿಟ್ಟರು.</verse>
				<verse number="60">ದೇವರು ಸಿಲೋವಿನ ಗುಡಾರನ್ನೂ ಜನರೊಳಗೆ ಹಾಕಿದ ಗುಡಾರವನ್ನೂ ತಳ್ಳಿಬಿಟ್ಟರು.</verse>
				<verse number="61">ತಮ್ಮ ಬಲದ ಮಂಜೂಷವನ್ನು ಸೆರೆಗೆ ಒಪ್ಪಿಸಿಬಿಟ್ಟರು. ತಮ್ಮ ಮಹಿಮೆಯನ್ನು ವೈರಿಯ ಕೈಗೂ ಕೊಟ್ಟುಬಿಟ್ಟರು.</verse>
				<verse number="62">ದೇವರು ತಮ್ಮ ಜನರನ್ನು ಖಡ್ಗಕ್ಕೆ ಒಪ್ಪಿಸಿಕೊಟ್ಟರು. ತಮ್ಮ ಸ್ವಾಸ್ಥತೆಗೆ ವಿರೋಧವಾಗಿದ್ದರು.</verse>
				<verse number="63">ಅವರ ಯುವಕರನ್ನು ಬೆಂಕಿಯು ದಹಿಸಿಬಿಟ್ಟಿತು. ಅವರ ಕನ್ಯೆಯರು ವಿವಾಹ ಗೀತೆಗಳನ್ನು ಹಾಡಲಿಲ್ಲ.</verse>
				<verse number="64">ಅವರ ಯಾಜಕರು ಖಡ್ಗದಿಂದ ಸಂಹಾರವಾದರು. ಅವರ ವಿಧವೆಯರು ಗೋಳಾಡಲಿಲ್ಲ.</verse>
				<verse number="65">ಆಗ ಯೆಹೋವ ದೇವರು ಪ್ರತಿಕ್ರಿಯೆಯನ್ನು ಪ್ರಕಟಿಸಿದರು. ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆ ಸಂರಕ್ಷಿಸಲಾದರು.</verse>
				<verse number="66">ತಮ್ಮ ವೈರಿಗಳನ್ನು ದಂಡಿಸಿದರು. ನಿತ್ಯನಿಂದೆಯೇ ಅವರ ಪಾಲಾಯಿತು.</verse>
				<verse number="67">ಆಗ ದೇವರು ಯೋಸೇಫನ ಗುಡಾರವನ್ನು ತಿರಸ್ಕರಿಸಿ, ಎಫ್ರಾಯೀಮನ ಗೋತ್ರವನ್ನು ಆಯ್ದುಕೊಳ್ಳದೆ,</verse>
				<verse number="68">ಯೆಹೂದನ ಕುಲವನ್ನೂ, ತಾನು ಪ್ರೀತಿಮಾಡಿದ ಚೀಯೋನ್ ಪರ್ವತವನ್ನೂ ಆಯ್ದುಕೊಂಡರು.</verse>
				<verse number="69">ಉನ್ನತವಾದವುಗಳಂತೆಯೂ, ಯುಗಯುಗಕ್ಕೂ ತಾವು ಅಸ್ತಿವಾರ ಹಾಕಿದ ಭೂಮಿಯಂತೆಯೂ ತಮ್ಮ ಪರಿಶುದ್ಧ ಸ್ಥಳವನ್ನು ಕಟ್ಟಿದರು.</verse>
				<verse number="70">ತಮ್ಮ ಸೇವಕ ದಾವೀದನನ್ನು ಆಯ್ದುಕೊಂಡು, ಕುರಿಹಟ್ಟಿಯಿಂದ ಅವನನ್ನು ತೆಗೆದುಕೊಂಡರು.</verse>
				<verse number="71">ತಮ್ಮ ಪ್ರಜೆಯಾದ ಯಾಕೋಬ್ಯರನ್ನೂ ತಮ್ಮ ಬಾಧ್ಯತೆಯಾದ ಇಸ್ರಾಯೇಲರನ್ನೂ ಮೇಯಿಸುವ ಕುರುಬನನ್ನಾಗಿ ದಾವೀದನನ್ನು ನೇಮಿಸಿದರು.</verse>
				<verse number="72">ದಾವೀದನು ತಮ್ಮ ಹೃದಯದ ಯಥಾರ್ಥತೆಯ ಪ್ರಕಾರ ಜನರನ್ನು ಪೋಷಿಸಿ ತಮ್ಮ ಹಸ್ತ ಕೌಶಲ್ಯದಿಂದ ಅವರನ್ನು ನಡೆಸಿದನು.</verse>
			</chapter>
			<chapter number="79">
				<verse number="1">ದೇವರೇ, ಜನಾಂಗಗಳು ನಿಮ್ಮ ಬಾಧ್ಯತೆಗೆ ಬಂದು, ನಿಮ್ಮ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.</verse>
				<verse number="2">ನಿಮ್ಮ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ನಿಮ್ಮ ಭಕ್ತರ ಮಾಂಸವನ್ನು ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಟ್ಟಿದ್ದಾರೆ.</verse>
				<verse number="3">ಅವರ ರಕ್ತವನ್ನು ಯೆರೂಸಲೇಮಿನ ಸುತ್ತಲೂ ನೀರಿನ ಹಾಗೆ ಚೆಲ್ಲಿದ್ದಾರೆ. ಅವರನ್ನು ಹೂಳಿಡುವವನೊಬ್ಬನೂ ಇಲ್ಲ.</verse>
				<verse number="4">ನಾವು ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.</verse>
				<verse number="5">ಯೆಹೋವ ದೇವರೇ ಎಷ್ಟರವರೆಗೆ ಕೋಪಗೊಂಡಿರುವಿರಿ? ಸತತವೂ ನೀವು ಕೋಪದಿಂದಿರುವಿರೋ? ಎಷ್ಟರವರೆಗೆ ನಿಮ್ಮ ರೋಷವು ಬೆಂಕಿಯಂತೆ ಉರಿಯುವುದು?</verse>
				<verse number="6">ನಿಮ್ಮನ್ನು ಸ್ವೀಕರಿಸದ ಜನಾಂಗಗಳ ಮೇಲೆಯೂ, ನಿಮ್ಮ ಹೆಸರನ್ನು ಕರೆಯದ ರಾಜ್ಯಗಳ ಮೇಲೆಯೂ ನಿಮ್ಮ ಕೋಪವನ್ನು ಸುರಿಸಿಬಿಡಿರಿ.</verse>
				<verse number="7">ಏಕೆಂದರೆ ಅವರು ಯಾಕೋಬರನ್ನು ನುಂಗಿಬಿಟ್ಟಿದ್ದಾರೆ. ಅವರ ನಿವಾಸವನ್ನು ಹಾಳು ಮಾಡಿದ್ದಾರೆ.</verse>
				<verse number="8">ಪೂರ್ವಿಕರ ಪಾಪಗಳನ್ನು ನಮಗೆ ವಿರೋಧವಾಗಿ ಜ್ಞಾಪಕ ಮಾಡಿಕೊಳ್ಳಬೇಡಿರಿ. ನಿಮ್ಮ ಕರುಣೆಯು ಬೇಗ ನಮ್ಮನ್ನು ಎದುರುಗೊಳ್ಳಲಿ. ನಾವು ಬಹಳವಾಗಿ ಕುಗ್ಗಿಹೋಗಿದ್ದೇವೆ.</verse>
				<verse number="9">ನಮ್ಮ ರಕ್ಷಕರಾಗಿರುವವರೇ, ನಮ್ಮ ದೇವರೇ, ನಿಮ್ಮ ಹೆಸರಿನ ಘನದ ನಿಮಿತ್ತ ನಮಗೆ ಸಹಾಯಮಾಡಿರಿ. ನಿಮ್ಮ ಹೆಸರಿಗೆ ತಕ್ಕಂತೆ ನಮ್ಮನ್ನು ಬಿಡಿಸಿರಿ. ನಮ್ಮ ಪಾಪಗಳನ್ನು ತೊಳೆದುಬಿಡಿರಿ.</verse>
				<verse number="10">ಅವರ ದೇವರು ಎಲ್ಲಿ ಎಂದು ಇತರ ಜನಾಂಗಗಳು ಏಕೆ ಹೇಳಬೇಕು? ಚೆಲ್ಲಿರುವ ನಿಮ್ಮ ಸೇವಕರ ರಕ್ತದ ಪ್ರತಿದಂಡನೆಯು ನಮ್ಮ ಕಣ್ಣುಗಳ ಮುಂದೆ ಇತರ ಜನಾಂಗಗಳಲ್ಲಿ ಗೊತ್ತಾಗಲಿ.</verse>
				<verse number="11">ಸೆರೆಯವರ ನಿಟ್ಟುಸಿರು ನಿಮ್ಮ ಮುಂದೆ ಬರಲಿ. ನಿಮ್ಮ ಮಹಾಶಕ್ತಿಯ ಪ್ರಕಾರ ಸಾಯುವುದಕ್ಕಿರುವವರನ್ನು ಕಾಪಾಡಿರಿ.</verse>
				<verse number="12">ಯೆಹೋವ ದೇವರೇ, ನಿಮ್ಮನ್ನು ನಿಂದಿಸಿದ ನಮ್ಮ ನೆರೆಯವರಿಗೆ ಏಳರಷ್ಟು ಪ್ರತಿದಂಡನೆಯನ್ನು ಅವರ ಮಡಿಲಿಗೆ ಕೊಡಿರಿ.</verse>
				<verse number="13">ಆಗ ನಿಮ್ಮ ಜನರೂ, ನಿಮ್ಮ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿಮ್ಮನ್ನು ಕೊಂಡಾಡಿ, ತಲತಲಾಂತರಕ್ಕೂ ನಿಮ್ಮ ಸ್ತೋತ್ರವನ್ನು ಸಾರುವೆವು.</verse>
			</chapter>
			<chapter number="80">
				<verse number="1">ಮಂದೆಯಂತೆ ಯೋಸೇಫ್ಯರನ್ನು ನಡೆಸುವ ಇಸ್ರಾಯೇಲರ ಕುರುಬ ಆಗಿರುವ ದೇವರೇ, ಕಿವಿಗೊಡಿರಿ. ಕೆರೂಬಿಗಳ ಮಧ್ಯದಲ್ಲಿ ಆಸೀನವಾಗಿರುವ ದೇವರೇ ಪ್ರಕಾಶಿಸಿರಿ.</verse>
				<verse number="2">ಎಫ್ರಾಯೀಮ್, ಬೆನ್ಯಾಮೀನ್, ಮನಸ್ಸೆಯರ ಮುಂದೆ ನಿಮ್ಮ ಪರಾಕ್ರಮವನ್ನು ತೋರಿಸಲು ಬಂದು ನಮ್ಮನ್ನು ರಕ್ಷಿಸಿರಿ.</verse>
				<verse number="3">ದೇವರೇ, ನಮ್ಮನ್ನು ಪುನಃ ಸ್ಥಾಪಿಸಿರಿ. ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. ಆಗ ನಾವು ರಕ್ಷಣೆ ಹೊಂದುವೆವು.</verse>
				<verse number="4">ಸರ್ವಶಕ್ತ ದೇವರಾಗಿರುವ ಯೆಹೋವ ದೇವರೇ, ಎಷ್ಟರವರೆಗೆ ನಿಮ್ಮ ಜನರ ಪ್ರಾರ್ಥನೆಗೆ ವಿರೋಧವಾಗಿ ಬೇಸರಗೊಳ್ಳುವಿರಿ?</verse>
				<verse number="5">ರೋದನವೇ ನಮ್ಮ ಅನ್ನವಾಗುವಂತೆಯೂ ಅಶ್ರುಧಾರೆಯೇ ಪಾನವಾಗುವಂತೆಯೂ ಅನುಮತಿಸಿದ್ದೀರಿ.</verse>
				<verse number="6">ನಮ್ಮ ನೆರೆಯವರ ವಿವಾದಕ್ಕೆ ನಮ್ಮನ್ನು ಗುರಿಮಾಡಿದ್ದೀರಿ. ನಮ್ಮ ಶತ್ರುಗಳು ನಮ್ಮನ್ನು ಅಪಹಾಸ್ಯ ಮಾಡುತ್ತಾರೆ.</verse>
				<verse number="7">ಸರ್ವಶಕ್ತರಾದ ದೇವರೇ, ನೀವು ನಮ್ಮನ್ನು ಪುನಃ ಸ್ಥಾಪಿಸಿರಿ. ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. ಆಗ ನಾವು ರಕ್ಷಣೆ ಹೊಂದುವೆವು.</verse>
				<verse number="8">ನೀವು ದ್ರಾಕ್ಷಾಲತೆಯನ್ನು ಈಜಿಪ್ಟಿನಿಂದ ತಂದು, ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿದ್ದೀರಿ.</verse>
				<verse number="9">ಅದಕ್ಕಾಗಿ ಸ್ಥಳ ಸಿದ್ಧಮಾಡಿದಿರಿ. ಆಗ ಅದು ಬೇರೂರಿ ದೇಶವನ್ನು ತುಂಬಿತು.</verse>
				<verse number="10">ಅದರ ನೆರಳಿನಿಂದ ಬೆಟ್ಟಗಳೂ ಅದರ ಕೊಂಬೆಗಳಿಂದ ದೇವದಾರುಗಳೂ ಮುಚ್ಚಲಾದವು.</verse>
				<verse number="11">ಅದು ತನ್ನ ರೆಂಬೆಗಳನ್ನು ಸಮುದ್ರದವರೆಗೂ, ತನ್ನ ಬಳ್ಳಿಗಳನ್ನು ನದಿಯವರೆಗೂ ಹರಡಿಸಿತು.</verse>
				<verse number="12">ಮಾರ್ಗದಲ್ಲಿ ಹಾದುಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಏಕೆ ಅದರ ಬೇಲಿಗಳನ್ನು ನೀವು ಮುರಿದುಬಿಟ್ಟಿದ್ದೀರಿ?</verse>
				<verse number="13">ಅಡವಿಯಿಂದ ಬಂದ ಹಂದಿಗಳು ಅದನ್ನು ಹಾಳು ಮಾಡುತ್ತವೆ; ಕಾಡಿನ ಮೃಗಗಳು ಅದನ್ನು ತಿಂದು ಹಾಕುತ್ತವೆ.</verse>
				<verse number="14">ಸೇನಾಧೀಶ್ವರ ದೇವರೇ, ನಿಮ್ಮ ದರ್ಶನವಾಗಲಿ. ನೀವು ಪರಲೋಕದಿಂದ ಕಟಾಕ್ಷಿಸಿರಿ. ಈ ದ್ರಾಕ್ಷಾಲತೆಯನ್ನು ಪರಾಮರಿಸಿರಿ.</verse>
				<verse number="15">ನಿಮ್ಮ ಬಲಗೈ ನೆಟ್ಟ ಸಸಿಯನ್ನೂ ನೀವು ನಿಮಗೆ ಬೆಳಸಿಕೊಂಡ ಬಳ್ಳಿಯನ್ನೂ ಪರಾಮರಿಸಿರಿ.</verse>
				<verse number="16">ನಿಮ್ಮ ದ್ರಾಕ್ಷಿಬಳ್ಳಿ ಕಡಿದು ಬೆಂಕಿಯಿಂದ ಸುಡಲಾಗಿದೆ. ನೀವು ಖಂಡಿಸಲು ನಿಮ್ಮ ಜನರು ಬಾಧಿತರಾಗಿ ಹೋಗುವರು.</verse>
				<verse number="17">ನಿಮ್ಮ ಬಲಗಡೆಯಲ್ಲಿರುವಾತನ ಮೇಲೆ ನಿಮ್ಮ ಹಸ್ತವಿರಲಿ. ನಿಮಗಾಗಿ ಆ ನರಪುತ್ರನನ್ನು ಎಬ್ಬಿಸಿದ್ದೀರಿ.</verse>
				<verse number="18">ಆಗ ನಾವು ನಿಮ್ಮಿಂದ ತೊಲಗುವುದಿಲ್ಲ. ನಮ್ಮನ್ನು ಉಜ್ಜೀವಿಸಿರಿ, ಆಗ ನಿಮ್ಮ ಹೆಸರನ್ನು ಕರೆಯುವೆವು.</verse>
				<verse number="19">ಸರ್ವಶಕ್ತರಾದ ದೇವರೇ, ನೀವು ನಮ್ಮನ್ನು ಪುನಃ ಸ್ಥಾಪಿಸಿರಿ. ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. ಆಗ ನಾವು ರಕ್ಷಣೆ ಹೊಂದುವೆವು.</verse>
			</chapter>
			<chapter number="81">
				<verse number="1">ನಮ್ಮ ಬಲವಾಗಿರುವ ದೇವರಿಗೆ ಗಟ್ಟಿಯಾದ ಧ್ವನಿಯಿಂದ ಹಾಡಿರಿ; ಯಾಕೋಬನ ದೇವರಿಗೆ ಜಯಧ್ವನಿ ಗೈಯಿರಿ.</verse>
				<verse number="2">ವಾದ್ಯ ಪ್ರಾರಂಭಿಸಿರಿ; ದಮ್ಮಡಿಯನ್ನೂ, ರಮ್ಯವಾದ ಕಿನ್ನರಿಯನ್ನೂ ವೀಣೆಯ ಸಂಗಡ ಬಾರಿಸಿರಿ.</verse>
				<verse number="3">ಅಮಾವಾಸ್ಯೆಯಲ್ಲಿಯೂ ಉತ್ಸವ ದಿವಸವಾಗಿರುವ ಪೂರ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.</verse>
				<verse number="4">ಏಕೆಂದರೆ ಇದು ಇಸ್ರಾಯೇಲಿಗೆ ಕಟ್ಟಳೆ. ಯಾಕೋಬನ ದೇವರ ನ್ಯಾಯ ಪ್ರಮಾಣವೇ.</verse>
				<verse number="5">ದೇವರು ಈಜಿಪ್ಟಿಗೆ ವಿರೋಧವಾಗಿ ಹೊರಟಾಗ, ಅದನ್ನು ಯೋಸೇಫನಲ್ಲಿ ಸಾಕ್ಷಿಯಾಗಿ ನೇಮಿಸಿದನು. ನಾವು ತಿಳಿಯದ ಭಾಷೆಯನ್ನು ಕೇಳಿದಾಗ:</verse>
				<verse number="6">“ಅವರ ಹೆಗಲ ಮೇಲಿಂದ ಭಾರವನ್ನು ತೆಗೆದುಹಾಕಿದೆನು, ಬುಟ್ಟಿಗಳಿಂದ ಅವರ ಕೈಗಳು ಬಿಡುಗಡೆಯಾದವು.</verse>
				<verse number="7">ಇಕ್ಕಟ್ಟಿನಲ್ಲಿ ನೀವು ಕರೆಮಾಡಿದಿರಿ, ಆಗ ನಾನು ನಿಮ್ಮನ್ನು ವಿಮೋಚಿಸಿದೆನು. ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟೆನು. ಮೆರೀಬಾ ನೀರಿನ ಹತ್ತಿರ ನಿಮ್ಮನ್ನು ಪರೀಕ್ಷಿಸಿದೆನು.</verse>
				<verse number="8">ನನ್ನ ಜನರೇ ಕೇಳಿರಿ, ಇಸ್ರಾಯೇಲೇ, ನೀನು ನನ್ನ ಮಾತನ್ನು ಕೇಳಬೇಕೆಂದು ನಿಮ್ಮನ್ನು ಎಚ್ಚರಿಸುತ್ತೇನೆ.</verse>
				<verse number="9">ನಿಮ್ಮಲ್ಲಿ ಅನ್ಯದೇವರು ಇರಬಾರದು; ಪರದೇವರಿಗೆ ಅಡ್ಡ ಬೀಳಬಾರದು.</verse>
				<verse number="10">ಈಜಿಪ್ಟ್ ದೇಶದಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಯೆಹೋವ ದೇವರು ನಾನೇ; ನಿಮ್ಮ ಬಾಯಿಯನ್ನು ಅಗಲವಾಗಿ ತೆರೆ, ಆಗ ಅದನ್ನು ತುಂಬಿಸುವೆನು.</verse>
				<verse number="11">“ಆದರೆ ನನ್ನ ಜನರು ನನ್ನ ಮಾತನ್ನು ಕೇಳಲಿಲ್ಲ; ಇಸ್ರಾಯೇಲು ನನಗೆ ಅಧೀನವಾಗಲಿಲ್ಲ.</verse>
				<verse number="12">ಆದ್ದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಂತೆ ನಡೆದುಕೊಂಡರು.</verse>
				<verse number="13">“ಹಾ, ನನ್ನ ಜನರು ನನ್ನ ಮಾತನ್ನು ಕೇಳಿದರೆ ಒಳ್ಳೆದಾಗಿತ್ತು! ಇಸ್ರಾಯೇಲು ನನ್ನ ಮಾರ್ಗದಲ್ಲಿ ನಡೆದುಕೊಂಡರೆ ಮೇಲಾಗುತ್ತಿತ್ತು,</verse>
				<verse number="14">ತೀವ್ರವಾಗಿ ಅವರ ಶತ್ರುಗಳನ್ನು ಧೀನಪಡಿಸುವೆನು. ಅವರ ವೈರಿಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.</verse>
				<verse number="15">ಯೆಹೋವ ದೇವರನ್ನು ದ್ವೇಷಿಸುವವರು ತಮ್ಮನ್ನು ತಾವೇ ದೇವರಿಗೆ ಒಪ್ಪಿಸಿಕೊಡುವರು. ಆದರೂ ಅವರಿಗೆ ಶಿಕ್ಷೆ ತಪ್ಪುವುದಿಲ್ಲ.</verse>
				<verse number="16">ನಿಮಗಾದರೋ ಉತ್ತಮವಾದ ಗೋಧಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ನಿಮ್ಮನ್ನು ತೃಪ್ತಿಪಡಿಸುವೆನು.”</verse>
			</chapter>
			<chapter number="82">
				<verse number="1">ದೇವರು ಮಹಾಸಭೆಯಲ್ಲಿ ಅಧ್ಯಕ್ಷತೆವಹಿಸಿ, ದೇವರುಗಳ ಮಧ್ಯದಲ್ಲಿ ನ್ಯಾಯತೀರಿಸುತ್ತಾರೆ.</verse>
				<verse number="2">“ಎಷ್ಟರವರೆಗೆ ಅನ್ಯಾಯವಾಗಿ ತೀರ್ಪು ನೀಡುವಿರಿ. ಎಲ್ಲಿಯತನಕ ದುಷ್ಟರಿಗೆ ಮುಖದಾಕ್ಷಿಣ್ಯ ಮಾಡುವಿರಿ?</verse>
				<verse number="3">ದರಿದ್ರನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿರಿ. ದೀನನಿಗೂ, ಬಡವನಿಗೂ ನ್ಯಾಯವನ್ನು ಕೊಡಿರಿ.</verse>
				<verse number="4">ದರಿದ್ರನನ್ನೂ, ಬಡವನನ್ನೂ ತಪ್ಪಿಸಿರಿ. ಅವರನ್ನು ದುಷ್ಟರ ಕೈಯೊಳಗಿಂದ ಬಿಡಿಸಿರಿ.</verse>
				<verse number="5">“ದೇವರುಗಳು ಅರಿಯರು ಏನೂ, ಅವರು ಗ್ರಹಿಸುವುದಿಲ್ಲ ಏನೂ. ಅವರು ಕತ್ತಲೆಯಲ್ಲಿ ನಡೆದುಕೊಳ್ಳುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತಿದೆ.</verse>
				<verse number="6">“ನಾನು ಮುಂದುವರೆಸಿ ಅವರಿಗೆ ಹೇಳಿದ್ದು, ‘ನೀವು ದೇವರುಗಳು, ನೀವೆಲ್ಲರು ಮಹೋನ್ನತ ದೇವರ ಮಕ್ಕಳು,’ ಎಂದು ಹೇಳಿದೆನು.</verse>
				<verse number="7">ಆದರೂ ಕೇವಲ ಮನುಷ್ಯರ ಹಾಗೆ ನೀವು ಸಾಯುವಿರಿ. ಇತರ ನಾಯಕರಂತೆಯೇ ಬಿದ್ದು ಹೋಗುವಿರಿ.”</verse>
				<verse number="8">ದೇವರೇ, ಬನ್ನಿರಿ ಭೂಮಿಗೆ ನ್ಯಾಯತೀರಿಸಿರಿ. ಏಕೆಂದರೆ ಜನಾಂಗಗಳೆಲ್ಲಾ ನಿಮಗೇ ಸೇರಿರುತ್ತವೆ.</verse>
			</chapter>
			<chapter number="83">
				<verse number="1">ದೇವರೇ, ಮೌನವಾಗಿರಬೇಡಿರಿ. ನಮ್ಮ ಕೂಗಿಗೆ ನಿಮ್ಮ ಪ್ರತಿಕ್ರಿಯೆ ನೀಡಿರಿ. ದೇವರೇ, ಸುಮ್ಮನಿರಬೇಡಿರಿ.</verse>
				<verse number="2">ಏಕೆಂದರೆ ಇಗೋ, ನಿಮ್ಮ ಶತ್ರುಗಳು ಘೋಷಿಸುತ್ತಾರೆ. ನಿಮ್ಮ ವೈರಿಗಳು ತಲೆ ಎತ್ತುತ್ತಾರೆ.</verse>
				<verse number="3">ನಿಮ್ಮ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿ ಕಲ್ಪಿಸುತ್ತಾರೆ. ನೀವು ಅಡಗಿಸಿಟ್ಟವರಿಗೆ ವಿರೋಧವಾಗಿ ಆಲೋಚಿಸಿಕೊಳ್ಳುತ್ತಾರೆ.</verse>
				<verse number="4">ಅವರು, “ಬನ್ನಿರಿ, ರಾಷ್ಟ್ರವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲರ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ,” ಎನ್ನುತ್ತಾರೆ.</verse>
				<verse number="5">ಅವರು ಏಕ ಮನಸ್ಕರಾಗಿ ಆಲೋಚನೆ ಮಾಡಿಕೊಂಡಿದ್ದಾರೆ. ನಿಮಗೆ ವಿರೋಧವಾಗಿ ಒಡಂಬಟ್ಟಿದ್ದಾರೆ.</verse>
				<verse number="6">ಎದೋಮ್ಯರ ಮತ್ತು ಇಷ್ಮಾಯೇಲ್ಯರ ಪಾಳೆಯದವರು ಮೋವಾಬ್ಯರು, ಹಗ್ರೀಯರು,</verse>
				<verse number="7">ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಟೈರಿನವರು, ಫಿಲಿಷ್ಟಿಯರು,</verse>
				<verse number="8">ಅಸ್ಸೀರಿಯರು ಎಲ್ಲರೂ ಅವರಲ್ಲಿ ಕೂಡಿಕೊಂಡಿರುವರು; ಅವರು ಲೋಟನ ಸಂತತಿಯವರಿಗೆ ಸಹಾಯಮಾಡಲು ಸಿದ್ಧರಾಗಿದ್ದಾರೆ.</verse>
				<verse number="9">ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡಿರಿ.</verse>
				<verse number="10">ಅವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.</verse>
				<verse number="11">ಅವರನ್ನೂ, ಅವರ ಅಧಿಪತಿಗಳನ್ನೂ, ಓರೇಬ್ ಮತ್ತು ಜೇಬನ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೆಬಹ ಮತ್ತು ಚಲ್ಮುನ್ನರ ಹಾಗೆಯೂ ಮಾಡಿರಿ.</verse>
				<verse number="12">ಅವರು, “ನಾವು ದೇವರ ಹುಲ್ಲುಗಾವಲು ಪ್ರದೇಶಗಳನ್ನು ಸ್ವಾಧೀನ ಮಾಡಿಕೊಳ್ಳೋಣ,” ಅನ್ನುತ್ತಾರೆ.</verse>
				<verse number="13">ನನ್ನ ದೇವರೇ, ಅವರನ್ನು ಚಕ್ರದ ಹಾಗೆಯೂ, ಗಾಳಿಯ ಮುಂದಿರುವ ಕಸದ ಹಾಗೆಯೂ ಮಾಡು.</verse>
				<verse number="14">ಅಡವಿ ಸುಡುವ ಬೆಂಕಿಯ ಹಾಗೆಯೂ, ಬೆಟ್ಟಗಳನ್ನು ದಹಿಸುವ ಜ್ವಾಲೆಯ ಹಾಗೆಯೂ</verse>
				<verse number="15">ನಿಮ್ಮ ಬಿರುಗಾಳಿಯಿಂದ ಅವರನ್ನು ಹಿಂಸಿಸಿ, ನಿಮ್ಮ ಸುಳಿಗಾಳಿಯಿಂದ ಅವರನ್ನು ತಲ್ಲಣ ಪಡಿಸಿರಿ.</verse>
				<verse number="16">ಯೆಹೋವ ದೇವರೇ, ನಿಮ್ಮ ನಾಮವನ್ನು ಅವರು ಹುಡುಕುವಂತೆ ಅವರ ಮುಖಗಳನ್ನು ನಾಚಿಕೆಯಿಂದ ತುಂಬಿಸಿರಿ.</verse>
				<verse number="17">ಅವರು ನಾಚಿಕೆಪಟ್ಟು ಕಳವಳಗೊಳ್ಳಲಿ. ಹೌದು, ಅವರು ಲಜ್ಜೆಪಟ್ಟು ನಾಶವಾಗಲಿ.</verse>
				<verse number="18">ಯೆಹೋವ ದೇವರು ಎಂಬ ಹೆಸರುಳ್ಳ ನೀವು ಮಾತ್ರವೇ ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ ಎಂದು ಅವರು ತಿಳಿದುಕೊಳ್ಳಲಿ.</verse>
			</chapter>
			<chapter number="84">
				<verse number="1">ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ!</verse>
				<verse number="2">ಯೆಹೋವ ದೇವರ ಅಂಗಳಗಳಲ್ಲಿ ಸೇರಲು ನನ್ನ ಪ್ರಾಣವು ಬಯಸಿ ಕುಂದುತ್ತದೆ. ನನ್ನ ಹೃದಯವೂ, ನನ್ನ ಶರೀರವೂ ಜೀವವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.</verse>
				<verse number="3">ಓ ಸೇನಾಧೀಶ್ವರ ಯೆಹೋವ ದೇವರೇ, ನನ್ನ ಅರಸರಾಗಿರುವವರೇ, ನನ್ನ ದೇವರೇ, ಗುಬ್ಬಿಯು ಮನೆಯನ್ನೂ, ಬಾನಕ್ಕಿಯು ತನ್ನ ಮರಿಗಳನ್ನಿಡುವ ಗೂಡನ್ನೂ ನಿಮ್ಮ ಬಲಿಪೀಠಗಳ ಬಳಿಯಲ್ಲಿ ದೊರಕಿತಲ್ಲಾ.</verse>
				<verse number="4">ನಿಮ್ಮ ಆಲಯದಲ್ಲಿ ವಾಸವಾಗಿರುವವರು ಧನ್ಯರು; ನಿಮ್ಮನ್ನು ಅವರು ಯಾವಾಗಲೂ ಸ್ತುತಿಸುವರು.</verse>
				<verse number="5">ನಿಮ್ಮಲ್ಲಿ ಯಾರು ಬಲಹೊಂದಿರುವರೋ, ಯಾರು ಯಾತ್ರಿಗಳಾಗಿದ್ದಾರೋ ಅವರು ಧನ್ಯರು.</verse>
				<verse number="6">ಬಾಕಾ ತಗ್ಗನ್ನು ದಾಟುವಾಗ ಅವರು ಅದನ್ನು ಬುಗ್ಗೆಯಾಗಿ ಮಾಡುತ್ತಾರೆ. ಮುಂಗಾರು ಮಳೆಯು ಕೊಳಗಳನ್ನು ತುಂಬುತ್ತದೆ.</verse>
				<verse number="7">ಅವರು ಬಲದಿಂದ ಬಲಕ್ಕೆ ಸಾಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.</verse>
				<verse number="8">ಸರ್ವಶಕ್ತರಾದ ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ. ಯಾಕೋಬನ ದೇವರೇ, ಕಿವಿಗೊಡಿರಿ.</verse>
				<verse number="9">ನಮ್ಮ ಗುರಾಣಿಯಾಗಿರುವ ದೇವರೇ, ನೋಡಿರಿ. ನಿಮ್ಮ ಅಭಿಷಿಕ್ತನ ಮುಖವನ್ನು ದೃಷ್ಟಿಸಿ ನೋಡಿರಿ.</verse>
				<verse number="10">ಏಕೆಂದರೆ ನಿಮ್ಮ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು ಬೇರೆ ಸಹಸ್ರ ದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಬಾಗಿಲು ಕಾಯುವವನಾಗಿರುವುದೇ ಲೇಸು.</verse>
				<verse number="11">ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ. ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ. ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ.</verse>
				<verse number="12">ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮಲ್ಲಿ ಭರವಸವಿಡುವವನೇ ಭಾಗ್ಯವಂತನು.</verse>
			</chapter>
			<chapter number="85">
				<verse number="1">ಯೆಹೋವ ದೇವರೇ, ನಿಮ್ಮ ದೇಶವನ್ನು ನೀವು ದಯೆ ತೋರಿಸಿದ್ದೀರಿ. ಯಾಕೋಬನ್ನು ಸೆರೆಯಿಂದ ಹಿಂದಕ್ಕೆ ಬರಮಾಡಿದ್ದೀರಿ.</verse>
				<verse number="2">ನಿಮ್ಮ ಜನರ ಅಕ್ರಮವನ್ನು ಪರಿಹರಿಸಿದ್ದೀರಿ. ಅವರ ಪಾಪವನ್ನೆಲ್ಲಾ ಮುಚ್ಚಿದ್ದೀರಿ.</verse>
				<verse number="3">ನಿಮ್ಮ ಕೋಪವನ್ನೆಲ್ಲಾ ತೆಗೆದುಬಿಟ್ಟಿದ್ದೀರಿ. ನಿಮ್ಮ ಬೇಸರದಿಂದ ತಿರುಗಿಕೊಂಡಿದ್ದೀರಿ.</verse>
				<verse number="4">ನಮ್ಮ ರಕ್ಷಕ ಆಗಿರುವ ದೇವರೇ, ನಮ್ಮನ್ನು ಪುನಃ ಸ್ಥಾಪಿಸಿರಿ, ನಮ್ಮ ಮೇಲಿರುವ ನಿಮ್ಮ ಅಸಂತೋಷವನ್ನು ತೊಲಗಿಸಿರಿ.</verse>
				<verse number="5">ಎಂದೆಂದಿಗೂ ನಮ್ಮ ಮೇಲೆ ಖಂಡಿಸುವಿರೋ? ತಲತಲಾಂತರಕ್ಕೂ ನಿಮ್ಮ ಬೇಸರ ಬೆಳೆಸುವಿರೋ?</verse>
				<verse number="6">ನಿಮ್ಮ ಜನರು ನಿಮ್ಮಲ್ಲಿ ಸಂತೋಷಪಡುವಂತೆ ನೀವು ತಿರುಗಿ ನಮ್ಮನ್ನು ಉಜ್ಜೀವಿಸುವುದಿಲ್ಲವೋ?</verse>
				<verse number="7">ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯನ್ನು ನಮಗೆ ತೋರಿಸಿರಿ. ನಿಮ್ಮ ರಕ್ಷಣೆಯನ್ನು ನಮಗೆ ಕೊಡಿರಿ.</verse>
				<verse number="8">ಯೆಹೋವ ದೇವರು ಏನು ಹೇಳುತ್ತಾರೋ ಅದನ್ನು ನಾನು ಕೇಳುವೆನು. ದೇವರು ತಮ್ಮ ಜನರಿಗೂ ತಮ್ಮ ಭಕ್ತರಿಗೂ ಸಮಾಧಾನವನ್ನು ವಾಗ್ದಾನಮಾಡುವರು. ಆದರೆ ಅವರ ಜನರು ಇನ್ನು ಬುದ್ಧಿಹೀನತೆಗೆ ತಿರುಗಿಕೊಳ್ಳದೆ ಇರಲಿ.</verse>
				<verse number="9">ನಿಶ್ಚಯವಾಗಿ ಮಹಿಮೆಯು ನಮ್ಮ ದೇಶದಲ್ಲಿ ವಾಸವಾಗಿರುವ ಹಾಗೆ, ದೇವರಿಗೆ ಭಯಪಡುವವರಿಗೆ ದೇವರ ರಕ್ಷಣೆಯು ಸಮೀಪವಾಗಿದೆ.</verse>
				<verse number="10">ಪ್ರೀತಿಯೂ ಸತ್ಯತೆಯೂ ಸಂಧಿಸಿಕೊಳ್ಳುತ್ತವೆ. ನೀತಿಯೂ ಸಮಾಧಾನವೂ ಮುದ್ದಿಟ್ಟುಕೊಳ್ಳುತ್ತವೆ.</verse>
				<verse number="11">ಸತ್ಯವು ಭೂಮಿಯಿಂದ ಮೊಳೆಯುವುದು. ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.</verse>
				<verse number="12">ಯೆಹೋವ ದೇವರು ಒಳ್ಳೆಯದನ್ನು ಕೊಡುವರು. ನಮ್ಮ ಭೂಮಿಯು ತನ್ನ ಸುಗ್ಗಿಯನ್ನು ಕೊಡುವುದು.</verse>
				<verse number="13">ನೀತಿಯು ದೇವರ ಮುಂದೆ ನಡೆದುಕೊಂಡು ಹೋಗಿ, ದೇವರಿಗೆ ಮಾರ್ಗ ಸಿದ್ಧಪಡಿಸುವುದು.</verse>
			</chapter>
			<chapter number="86">
				<verse number="1">ಯೆಹೋವ ದೇವರೇ, ನನಗೆ ಉತ್ತರಕೊಡಿರಿ. ನಾನು ದೀನನೂ ಅಗತ್ಯತೆಯಲ್ಲಿ ಇರುವವನೂ ಆಗಿದ್ದೇನೆ.</verse>
				<verse number="2">ನನ್ನ ಪ್ರಾಣವನ್ನು ಕಾಪಾಡಿರಿ, ನಾನು ನಿಮ್ಮ ಭಕ್ತ, ನೀವು ನನ್ನ ದೇವರು. ನಿಮ್ಮಲ್ಲಿ ಭರವಸವಿಟ್ಟಿರುವ ನಿಮ್ಮ ಸೇವಕನನ್ನು ರಕ್ಷಿಸಿರಿ.</verse>
				<verse number="3">ಯೆಹೋವ ದೇವರೇ, ನನ್ನನ್ನು ಕರುಣಿಸಿರಿ. ನಿಮಗೆ ದಿನವೆಲ್ಲಾ ಮೊರೆಯಿಡುತ್ತೇನೆ.</verse>
				<verse number="4">ನಿಮ್ಮ ಸೇವಕನ ಪ್ರಾಣವನ್ನು ಸಂತೋಷಪಡಿಸಿರಿ. ಯೆಹೋವ ದೇವರೇ, ನಿಮ್ಮಲ್ಲೇ ನನ್ನ ಪ್ರಾಣವನ್ನು ಇಟ್ಟಿದ್ದೇನೆ.</verse>
				<verse number="5">ಯೆಹೋವ ದೇವರೇ, ನೀವು ಒಳ್ಳೆಯವರೂ ಕ್ಷಮಿಸುವುದಕ್ಕೆ ಸಿದ್ಧರೂ ಆಗಿದ್ದೀರಿ. ನಿಮ್ಮನ್ನು ಬೇಡುವವರೆಲ್ಲರಿಗೆ ಪ್ರೀತಿಯಲ್ಲಿ ಸಮೃದ್ಧಿವಂತರೂ ಆಗಿರುವಿರಿ.</verse>
				<verse number="6">ಯೆಹೋವ ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡಿರಿ. ನನ್ನ ವಿಜ್ಞಾಪನೆಗಳ ಸ್ವರವನ್ನು ಆಲೈಸಿರಿ.</verse>
				<verse number="7">ನನ್ನ ಇಕ್ಕಟ್ಟಿನ ದಿವಸದಲ್ಲಿ ನಿಮ್ಮನ್ನು ಕರೆಯುವೆನು. ನೀವು ನನಗೆ ಉತ್ತರ ಕೊಡುವಿರಿ.</verse>
				<verse number="8">ಯೆಹೋವ ದೇವರೇ, ದೇವರುಗಳಲ್ಲಿ ನಿಮ್ಮ ಹಾಗೆ ಯಾರೂ ಇಲ್ಲ. ನಿಮ್ಮ ಕೆಲಸಗಳ ಹಾಗೆ ಒಂದೂ ಇಲ್ಲ.</verse>
				<verse number="9">ಯೆಹೋವ ದೇವರೇ, ನೀವು ಉಂಟುಮಾಡಿದ ಜನಾಂಗದವರೆಲ್ಲರೂ ಬಂದು ನಿಮ್ಮ ಮುಂದೆ ಅಡ್ಡಬಿದ್ದು, ನಿಮ್ಮ ಹೆಸರಿಗೆ ಮಹಿಮೆ ಸಲ್ಲಿಸುವರು.</verse>
				<verse number="10">ನೀವು ದೊಡ್ಡವರೂ ಅದ್ಭುತಗಳನ್ನು ಮಾಡುವವರೂ ಆಗಿದ್ದೀರಿ. ನೀವೊಬ್ಬರೇ ದೇವರು.</verse>
				<verse number="11">ಯೆಹೋವ ದೇವರೇ, ನಿಮ್ಮ ಮಾರ್ಗವನ್ನು ನನಗೆ ಬೋಧಿಸಿರಿ. ಆಗ, ನಿಮ್ಮ ಸತ್ಯದಲ್ಲಿ ನಡೆದುಕೊಳ್ಳುವೆನು; ನಿಮ್ಮ ಹೆಸರಿಗೆ ಭಯಪಡುವಂತೆ ನನಗೆ ವಿಭಾಗವಿಲ್ಲದೆ ಹೃದಯವನ್ನು ದಯಪಾಲಿಸಿರಿ.</verse>
				<verse number="12">ನನ್ನ ದೇವರಾದ ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಕೊಂಡಾಡುವೆನು. ನಿಮ್ಮ ಹೆಸರನ್ನು ಯುಗಯುಗಕ್ಕೂ ಘನಪಡಿಸುವೆನು.</verse>
				<verse number="13">ನಿಮ್ಮ ಪ್ರೀತಿಯು ನನ್ನ ಮೇಲೆ ಅಗಾಧವಾಗಿದೆ. ಕೆಳಗಿನ ಪಾತಾಳದೊಳಗಿಂದ ನನ್ನ ಪ್ರಾಣವನ್ನು ಬಿಡಿಸಿದ್ದೀರಿ.</verse>
				<verse number="14">ದೇವರೇ, ಅಹಂಕಾರಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ. ಬಲಾತ್ಕಾರಿಗಳ ಗುಂಪು ನನ್ನ ಪ್ರಾಣವನ್ನು ಹುಡುಕುತ್ತದೆ. ಅವರು ನಿಮ್ಮನ್ನು ಗೌರವಿಸುವವರಲ್ಲ.</verse>
				<verse number="15">ಆದರೆ ನೀವು ಯೆಹೋವ ದೇವರೇ, ಅನುಕಂಪವೂ ದಯೆಯೂ ಉಳ್ಳ ದೇವರು ಮತ್ತು ದೀರ್ಘಶಾಂತರೂ ಪ್ರೀತಿಯಲ್ಲಿ ಸಮೃದ್ಧಿವಂತನೂ ಸತ್ಯತೆಯುಳ್ಳವರೂ ಆಗಿದ್ದೀರಿ.</verse>
				<verse number="16">ನನ್ನ ಕಡೆಗೆ ತಿರುಗಿಕೊಂಡು ನನ್ನನ್ನು ಕರುಣಿಸಿರಿ. ನಿಮ್ಮ ಸೇವಕನಿಗೆ ನಿಮ್ಮ ಬಲವನ್ನು ತೋರಿಸಿರಿ. ನನ್ನ ತಾಯಿ ನಿನ್ನ ಸೇವೆಮಾಡಿದಂತೆ ನಾನು ಸಹ ಸೇವೆಮಾಡುವುದರಿಂದ ನನ್ನನ್ನು ರಕ್ಷಿಸಿರಿ.</verse>
				<verse number="17">ನನಗಾಗಿ ನಿಮ್ಮ ಉಪಕಾರದ ಗುರುತೊಂದನ್ನು ತೋರಿಸಿರಿ. ಆಗ ನನ್ನ ವೈರಿಗಳು ಅದನ್ನು ಕಂಡು ನಾಚಿಕೆಪಡುವರು. ಏಕೆಂದರೆ ಯೆಹೋವ ದೇವರೇ, ನೀವು ನನಗೆ ಸಹಾಯಮಾಡಿ ನನ್ನನ್ನು ಆದರಿಸಿದ್ದೀರಿ.</verse>
			</chapter>
			<chapter number="87">
				<verse number="1">ಯೆಹೋವ ದೇವರು ತಮ್ಮ ಪಟ್ಟಣದ ಅಸ್ತಿವಾರವನ್ನು ಪರಿಶುದ್ಧ ಪರ್ವತದಲ್ಲಿ ಸ್ಥಾಪಿಸಿದ್ದಾರೆ.</verse>
				<verse number="2">ದೇವರು ಚೀಯೋನಿನ ದ್ವಾರಗಳನ್ನು ಯಾಕೋಬನ ಎಲ್ಲಾ ನಿವಾಸಗಳಿಗಿಂತ ಹೆಚ್ಚಾಗಿ ಪ್ರೀತಿ ಮಾಡುತ್ತಾರೆ.</verse>
				<verse number="3">ದೇವರ ಪಟ್ಟಣವೇ, ನಿನ್ನ ವಿಷಯವಾದ ಮಹಿಮೆಯು ಏನೆಂದರೆ,</verse>
				<verse number="4">“ರಾಹಬ್, ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ, ಫಿಲಿಷ್ಟಿಯ, ಟೈರ್, ಕೂಷ್ ಜನಾಂಗಗಳು, ‘ಚೀಯೋನಿನಲ್ಲೇ ಹುಟ್ಟಿದವು.’ ”</verse>
				<verse number="5">ಚೀಯೋನಿನ ವಿಷಯವಾಗಿ, “ಸಕಲ ಜನಾಂಗದವರೂ ಚೀಯೋನಿನಲ್ಲಿ ಹುಟ್ಟಿದರು. ಮಹೋನ್ನತರೇ ಅದನ್ನು ಸ್ಥಿರಪಡಿಸುವರು,” ಎಂದು ಹೇಳುವರು.</verse>
				<verse number="6">ಯೆಹೋವ ದೇವರು ಜನಾಂಗಗಳ ಗ್ರಂಥದಲ್ಲಿ ಬರೆಯುವಾಗ, “ಚೀಯೋನಿನಲ್ಲಿ ಇವನು ಹುಟ್ಟಿದನು,” ಎಂದು ಬರೆಯುವರು.</verse>
				<verse number="7">“ನನ್ನ ಎಲ್ಲಾ ಬುಗ್ಗೆಗಳು ನಿಮ್ಮಲ್ಲಿಯೇ ಇವೆ,” ಎಂದು ಸಂಗೀತಕಾರರು ಹಾಡುವರು.</verse>
			</chapter>
			<chapter number="88">
				<verse number="1">ನನ್ನನ್ನು ರಕ್ಷಿಸುವ ದೇವರಾದ ಯೆಹೋವ ದೇವರೇ, ಹಗಲಿರುಳು ನಿಮ್ಮ ಮುಂದೆ ಮೊರೆಯಿಡುತ್ತೇನೆ.</verse>
				<verse number="2">ನನ್ನ ಪ್ರಾರ್ಥನೆಯು ನಿಮ್ಮ ಮುಂದೆ ಬರಲಿ. ನನ್ನ ಮೊರೆಗೆ ನಿಮ್ಮ ಕಿವಿಕೊಡಿರಿ.</verse>
				<verse number="3">ನನ್ನ ಪ್ರಾಣವು ಕಷ್ಟದಿಂದ ತುಂಬಿದೆ; ನನ್ನ ಜೀವವು ಸಮಾಧಿಯ ಸಮೀಪಕ್ಕೆ ಎಳೆಯುತ್ತದೆ.</verse>
				<verse number="4">ಸಮಾಧಿ ಸೇರುವವರ ಸಂಗಡ ಎಣಿಸಲಾಗಿದ್ದೇನೆ; ನಾನು ಬಲವಿಲ್ಲದ ಪುರುಷನ ಹಾಗಿದ್ದೇನೆ.</verse>
				<verse number="5">ಹತರಾದವರು ಸಮಾಧಿಯಲ್ಲಿ ಮಲಗಿದಂತೆ ನಾನೂ ಸತ್ತವರೊಂದಿಗೆ ಸೇರಿರುತ್ತೇನೆ. ಅವರನ್ನು ನೀನೆಂದೂ ಜ್ಞಾಪಿಸಿಕೊಳ್ಳುವುದಿಲ್ಲ. ನಿಮ್ಮ ಪರಿಪಾಲನೆಯಿಂದ ದೂರವಾಗಿದ್ದಾರೆ.</verse>
				<verse number="6">ಅಧೋಲೋಕದಲ್ಲಿಯೂ ಗಾಡಾಂಧಕಾರದಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದೀರಿ.</verse>
				<verse number="7">ನಿಮ್ಮ ಬೇಸರವು ನನ್ನ ಮೇಲೆ ಭಾರವಾಗಿದೆ. ನಿಮ್ಮ ಅಲೆಗಳಿಂದೆಲ್ಲಾ ನನ್ನನ್ನು ಮುಳುಗಿಸಿದ್ದೀರಿ.</verse>
				<verse number="8">ನನ್ನ ಪರಿಚಿತರನ್ನು ನನ್ನಿಂದ ದೂರಮಾಡಿದ್ದೀರಿ. ನಾನು ಅವರಿಗೆ ಬೇಡವಾಗಿದ್ದೇನೆ. ನಾನು ಬಂಧಿತನಾಗಿದ್ದೇನೆ, ಹೊರಗೆ ಬರಲಾರೆನು.</verse>
				<verse number="9">ಬಾಧೆಯ ದೆಸೆಯಿಂದ ನನ್ನ ಕಣ್ಣು ಮಂದವಾಗಿ ಹೋಗಿದೆ. ಯೆಹೋವ ದೇವರೇ, ದಿನವೆಲ್ಲಾ ನಿಮ್ಮನ್ನು ಕರೆಯುತ್ತೇನೆ. ನಾನು ನಿಮ್ಮ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ.</verse>
				<verse number="10">ಸತ್ತವರಿಗೆ ಅದ್ಭುತಗಳನ್ನು ತೋರಿಸುವಿರೋ? ಸತ್ತವರು ಎದ್ದು ನಿಮ್ಮನ್ನು ಕೊಂಡಾಡುವರೋ?</verse>
				<verse number="11">ಸಮಾಧಿಯಲ್ಲಿ ನಿಮ್ಮ ಪ್ರೀತಿ ಸಾರಲಾಗುವುದೇ? ನಾಶನ ಸ್ಥಳದಲ್ಲಿ ನಿಮ್ಮ ನಂಬಿಗಸ್ತಿಕೆಯು ಹೇಳಲಾಗುವುದೋ?</verse>
				<verse number="12">ಕತ್ತಲೆಯಲ್ಲಿ ನಿಮ್ಮ ಅದ್ಭುತಗಳೂ ಮರೆತುಹೋಗಿರುವ ದೇಶದಲ್ಲಿ ನಿಮ್ಮ ನೀತಿಯೂ ತಿಳಿಯಲಾಗುವುದೋ?</verse>
				<verse number="13">ಆದರೆ ನಾನು ಯೆಹೋವ ದೇವರೇ, ನಿಮ್ಮ ಕಡೆಗೆ ಮೊರೆಯಿಡುತ್ತೇನೆ. ಉದಯಕಾಲದಲ್ಲಿ ನನ್ನ ಪ್ರಾರ್ಥನೆಯು ನಿಮ್ಮನ್ನು ಎದುರುಗೊಳ್ಳುವುದು.</verse>
				<verse number="14">ಯೆಹೋವ ದೇವರೇ, ನೀವೇಕೆ ನನ್ನನ್ನು ತಳ್ಳಿಬಿಟ್ಟಿದ್ದೀರಿ. ನನಗೆ ನಿಮ್ಮ ಮುಖ ಮರೆಮಾಡುತ್ತೀರಿ?</verse>
				<verse number="15">ಬಾಲ್ಯದಿಂದಲೂ ನಾನು ಬಾಧಿತನು ಸಾಯುವುದಕ್ಕೆ ಸಿದ್ಧನೂ ಆಗಿದ್ದೇನೆ. ನಿಮ್ಮ ದಂಡನೆಯನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ.</verse>
				<verse number="16">ನನ್ನ ಮೇಲೆ ನಿಮ್ಮ ಬೇಸರವು ಆವರಿಸಿದೆ. ನಿಮ್ಮ ದಂಡನೆಗಳು ನನ್ನನ್ನು ಬಾಧಿಸಿರುತ್ತವೆ.</verse>
				<verse number="17">ಪ್ರವಾಹಗಳ ಹಾಗೆ ಅವು ಬಂದು ನನ್ನನ್ನು ದಿನವೆಲ್ಲಾ ಸುತ್ತಿಕೊಳ್ಳುತ್ತವೆ; ಅವು ಸಂಪೂರ್ಣವಾಗಿ ನನ್ನನ್ನು ಮುತ್ತಿಕೊಳ್ಳುತ್ತವೆ.</verse>
				<verse number="18">ನನ್ನ ಆಪ್ತಮಿತ್ರರನ್ನು ದೂರ ಮಾಡಿದಿರಿ. ಅಂಧಕಾರವೇ ನನ್ನ ಪರಿಚಯವು.</verse>
			</chapter>
			<chapter number="89">
				<verse number="1">ಯೆಹೋವ ದೇವರ ಮಹಾ ಪ್ರೀತಿಯನ್ನು ಯುಗಯುಗಕ್ಕೂ ಹಾಡುವೆನು. ತಲತಲಾಂತರಕ್ಕೂ ನಿಮ್ಮ ನಂಬಿಗಸ್ತಿಕೆಯನ್ನು ನನ್ನ ಬಾಯಿ ತಿಳಿಯಪಡಿಸುವುದು.</verse>
				<verse number="2">ಎಂದೆಂದಿಗೂ ನಿಮ್ಮ ಪ್ರೀತಿಯನ್ನು ಸಾರುವೆನು. ಪರಲೋಕದಲ್ಲಿ ನಿಮ್ಮ ನಂಬಿಗಸ್ತಿಕೆಯನ್ನು ಸ್ಥಿರಪಡಿಸಿದ್ದೀರಿ ಎಂದು ಘೋಷಿಸುವೆನು.</verse>
				<verse number="3">ನೀವು ಹೇಳಿದ್ದೇನಂದರೆ, “ನಾನು ಆಯ್ದುಕೊಂಡವನ ಸಂಗಡ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ. ನಾನು ನನ್ನ ಸೇವಕನಾದ ದಾವೀದನಿಗೆ ಪ್ರಮಾಣ ಮಾಡಿದ್ದೇನೆ.</verse>
				<verse number="4">‘ಎಂದೆಂದಿಗೂ ನಿಮ್ಮ ಸಂತತಿಯನ್ನು ಸ್ಥಿರಪಡಿಸುವೆನು ತಲತಲಾಂತರಕ್ಕೂ ನಿಮ್ಮ ಸಿಂಹಾಸನವನ್ನು ಕಟ್ಟುವೆನು.’ ”</verse>
				<verse number="5">ಯೆಹೋವ ದೇವರೇ, ಆಕಾಶಗಳು ನಿಮ್ಮ ಅದ್ಭುತಗಳನ್ನೂ ಪರಿಶುದ್ಧರ ಸಭೆಯಲ್ಲಿ ನಿಮ್ಮ ನಂಬಿಗಸ್ತಿಕೆಯನ್ನೂ ಕೊಂಡಾಡುವುವು.</verse>
				<verse number="6">ಪ್ರಪಂಚದಲ್ಲಿ ಯೆಹೋವ ದೇವರಿಗೆ ಸಮಾನನಾದವನು ಯಾರು? ಪರಲೋಕ ಜೀವಿಗಳಲ್ಲಿ ಯೆಹೋವ ದೇವರಿಗೆ ಸಮಾನನಾದವನು ಯಾರು?</verse>
				<verse number="7">ಅವರು ಪರಿಶುದ್ಧರ ಸಭೆಯಲ್ಲಿ ಭಯಭಕ್ತಿಗೆ ಪಾತ್ರರಾದ ದೇವರು. ತಮ್ಮ ಎಲ್ಲಾ ಪರಿವಾರದವರಿಗಿಂತ ಅವರು ಅತಿಶಯವಾದವರು.</verse>
				<verse number="8">ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮ ಹಾಗೆ ಶಕ್ತರು ಯಾರು ಇದ್ದಾರೆ? ಯೆಹೋವ ದೇವರೇ, ನೀವು ಶಕ್ತರು, ನಿಮ್ಮ ನಂಬಿಗಸ್ತಿಕೆಯು ನಿಮ್ಮನ್ನು ಸುತ್ತುವರಿದಿದೆ.</verse>
				<verse number="9">ನೀವು ಸಮುದ್ರದ ಏರುವಿಕೆಯನ್ನು ಆಳುತ್ತೀರಿ. ಅದರ ತೆರೆಗಳು ಏಳುವಾಗ ಅವುಗಳನ್ನು ಸುಮ್ಮನಿರಿಸುತ್ತೀರಿ.</verse>
				<verse number="10">ಹತನಾದವನಂತೆ ನೀವು ರಹಬನ್ನು ಜಯಿಸಿದ್ದೀರಿ. ನಿಮ್ಮ ಭುಜಬಲದಿಂದ ನಿಮ್ಮ ಶತ್ರುಗಳನ್ನು ಚದರಿಸಿದ್ದೀರಿ.</verse>
				<verse number="11">ಆಕಾಶಗಳು ನಿಮ್ಮವು, ಭೂಮಿಯು ಸಹ ನಿಮ್ಮದು. ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನೀವು ಉಂಟುಮಾಡಿದ್ದೀರಿ.</verse>
				<verse number="12">ಉತ್ತರವನ್ನೂ ದಕ್ಷಿಣವನ್ನೂ ನೀವೇ ನಿರ್ಮಿಸಿದ್ದೀರಿ. ತಾಬೋರೂ, ಹೆರ್ಮೋನೂ ನಿಮ್ಮ ಹೆಸರಿನಲ್ಲಿ ಉತ್ಸಾಹ ಧ್ವನಿಗೈಯುತ್ತವೆ.</verse>
				<verse number="13">ನಿಮ್ಮ ಭುಜವು ಶಕ್ತಿಯುತವಾದದ್ದು. ನಿಮ್ಮ ಕೈ ಬಲವುಳ್ಳದ್ದು; ನಿಮ್ಮ ಬಲಗೈ ಉನ್ನತವಾದದ್ದು.</verse>
				<verse number="14">ನೀತಿಯೂ, ನ್ಯಾಯವೂ ನಿಮ್ಮ ಸಿಂಹಾಸನದ ಅಸ್ತಿವಾರವಾಗಿವೆ. ಪ್ರೀತಿಯೂ, ಸತ್ಯತೆಯೂ ನಿಮ್ಮ ಮುಂದೆ ಹೋಗುತ್ತವೆ.</verse>
				<verse number="15">ನಿಮ್ಮ ಉತ್ಸಾಹ ಧ್ವನಿಯನ್ನು ಕೇಳಿದ ಜನರು ಧನ್ಯರು. ಯೆಹೋವ ದೇವರೇ, ನಿಮ್ಮ ಸನ್ನಿಧಿಯ ಬೆಳಕಿನಲ್ಲಿ ನಡೆಯುವವರು ಧನ್ಯರು.</verse>
				<verse number="16">ನಿಮ್ಮ ಹೆಸರಿನಿಂದ ದಿನವೆಲ್ಲಾ ಉಲ್ಲಾಸಪಟ್ಟು, ನಿಮ್ಮ ನೀತಿಯಲ್ಲಿ ಅವರು ಉನ್ನತಕ್ಕೇರುವರು.</verse>
				<verse number="17">ಏಕೆಂದರೆ ಅವರ ಬಲವೂ ಮಹಿಮೆಯೂ ನೀವೇ. ನಿಮ್ಮ ಮೆಚ್ಚುಗೆಯಿಂದ ನಮ್ಮ ಬಲವೆಂಬ ಕೊಂಬು ಉನ್ನತವಾಗುವುದು.</verse>
				<verse number="18">ನಮ್ಮ ಗುರಾಣಿಯು ಯೆಹೋವ ದೇವರದೇ. ನಮ್ಮ ಅರಸರು ಇಸ್ರಾಯೇಲರ ಪರಿಶುದ್ಧರಾಗಿರುವರು.</verse>
				<verse number="19">ಆ ಕಾಲದಲ್ಲಿ ನೀವು ದರ್ಶನದಲ್ಲಿ ನಿಮ್ಮ ಭಕ್ತರಿಗೆ ಹೇಳಿದ್ದೇನೆಂದರೆ: “ಒಬ್ಬ ಶೂರನಿಗೆ ನಾನು ಬಲವನ್ನು ಅನುಗ್ರಹಿಸಿದ್ದೇನೆ. ಪ್ರಜೆಗಳಲ್ಲಿ ಒಬ್ಬ ಯೌವನಸ್ಥನನ್ನು ಆರಿಸಿ ಉನ್ನತ ಸ್ಥಾನದಲ್ಲಿಟ್ಟಿದ್ದೇನೆ.</verse>
				<verse number="20">ನನ್ನ ಸೇವಕನಾದ ದಾವೀದನನ್ನು ಕಂಡು, ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ.</verse>
				<verse number="21">ನನ್ನ ಕೈ ಅವನನ್ನು ಪರಿಪಾಲಿಸುವುದು; ನನ್ನ ಭುಜವು ಅವನನ್ನು ಬಲಪಡಿಸುವುದು.</verse>
				<verse number="22">ಶತ್ರುವು ಅವನನ್ನು ಜಯಿಸಲಾರನು. ಯಾವ ದುಷ್ಟನೂ ಅವನನ್ನು ಹಿಂಸೆಪಡಿಸನು.</verse>
				<verse number="23">ಅವನ ಮುಂದೆ ಅವನ ವೈರಿಗಳನ್ನು ಓಡಿಸಿಬಿಡುವೆನು; ಅವನ ವಿರೋಧಿಗಳನ್ನು ದಂಡಿಸುವೆನು.</verse>
				<verse number="24">ನನ್ನ ನಂಬಿಗಸ್ತಿಕೆಯೂ ಪ್ರೀತಿಯೂ ಅವನ ಸಂಗಡ ಇರುವುವು. ನನ್ನ ಹೆಸರಿನಲ್ಲಿ ಅವನ ಬಲವೆಂಬ ಕೊಂಬು ಉನ್ನತವಾಗುವುದು.</verse>
				<verse number="25">ಸಮುದ್ರ ಹಾಗು ನದಿಗಳ ಮೇಲೆ ಅವನ ಬಲಗೈಯನ್ನೂ ಇರಿಸುವೆನು.</verse>
				<verse number="26">ಅವನು, ‘ನೀವು ನನ್ನ ತಂದೆಯೂ ನನ್ನ ದೇವರೂ ನನ್ನ ರಕ್ಷಣೆಯ ಬಂಡೆಯೂ ಆಗಿದ್ದೀರಿ’ ಎಂದು ನನಗೆ ಮೊರೆಯಿಡುವನು.</verse>
				<verse number="27">ನಾನು ಆತನನ್ನು ನನ್ನ ಚೊಚ್ಚಲ ಮಗನನ್ನಾಗಿಯೂ ಭೂಮಿಯ ಅರಸರಿಗಿಂತ ಉನ್ನತನನ್ನಾಗಿಯೂ ಮಾಡಿಕೊಳ್ಳುವೆನು.</verse>
				<verse number="28">ಎಂದೆಂದಿಗೂ ಆತನಿಗೋಸ್ಕರ ನನ್ನ ಪ್ರೀತಿಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಆತನೊಂದಿಗೆ ದೃಢವಾಗಿರುವುದು.</verse>
				<verse number="29">ಆತನ ಸಂತತಿಯನ್ನು ಸಹ ಎಂದೆಂದಿಗೂ ಆತನ ಸಿಂಹಾಸನವನ್ನು ಆಕಾಶ ಇರುವವರೆಗೂ ಮಾಡುವೆನು.</verse>
				<verse number="30">“ಆತನ ಸಂತತಿಯು ನನ್ನ ನಿಯಮವನ್ನು ಬಿಟ್ಟು, ನನ್ನ ಶಾಸನಗಳನ್ನು ಅನುಸರಿಸಿ ನಡೆಯದೆ,</verse>
				<verse number="31">ಅವರು ನನ್ನ ತೀರ್ಪುಗಳನ್ನು ಮುರಿದು, ನನ್ನ ಆಜ್ಞೆಗಳನ್ನು ಕೈಗೊಳ್ಳದೆ ಹೋದರೆ,</verse>
				<verse number="32">ಕೋಲಿನಿಂದ ಅವರ ದ್ರೋಹವನ್ನೂ ಪೆಟ್ಟುಗಳಿಂದ ಅವರ ಅಕ್ರಮವನ್ನೂ ದಂಡಿಸುವೆನು.</verse>
				<verse number="33">ಆದರೂ ನನ್ನ ಪ್ರೀತಿ, ಕರುಣೆಯನ್ನು ಆತನಿಂದ ಸಂಪೂರ್ಣವಾಗಿ ತೊಲಗಿಸೆನು. ಇಲ್ಲವೆ ನನ್ನ ನಂಬಿಗಸ್ತಿಕೆಯಿಂದ ನಾನು ಜಾರಿಹೋಗೆನು.</verse>
				<verse number="34">ನನ್ನ ಒಡಂಬಡಿಕೆಯನ್ನು ನಾನು ಮುರಿಯೆನು. ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು.</verse>
				<verse number="35">ಒಂದೇ ಸಾರಿ ನನ್ನ ಪರಿಶುದ್ಧತ್ವದಿಂದ ಆಣೆಯಿಟ್ಟು ಹೇಳಿದ್ದೇನೆ. ದಾವೀದನಿಗೆ ಸುಳ್ಳಾಡೆನು.</verse>
				<verse number="36">ಆತನ ಸಂತತಿಯು ಯುಗಯುಗಕ್ಕೂ ಇರುವುದು. ಆತನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವುದು.</verse>
				<verse number="37">ಚಂದ್ರನ ಹಾಗೆ ಅದು ಯುಗಯುಗಕ್ಕೂ ಸ್ಥಿರವಾಗಿರುವುದು; ಆಕಾಶದಲ್ಲಿರುವ ಸಾಕ್ಷಿಯ ಹಾಗೆ ನಂಬಿಗಸ್ತಿಕೆಯುಳ್ಳದ್ದಾಗಿರುವುದು.”</verse>
				<verse number="38">ಆದರೆ ನೀವು ತಿರಸ್ಕರಿಸಿ ಬಿಟ್ಟುಬಿಟ್ಟ, ನಿಮ್ಮ ಅಭಿಷಿಕ್ತನಿಗೆ ವಿರೋಧವಾಗಿ ಬೇಸರವಾದಿರಿ.</verse>
				<verse number="39">ನಿಮ್ಮ ಸೇವಕನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ಮಣ್ಣುಪಾಲು ಮಾಡಿದ್ದೀರಿ.</verse>
				<verse number="40">ಅವನ ಗೋಡೆಗಳನ್ನೆಲ್ಲಾ ಮುರಿದು, ಅವನ ಕೋಟೆಗಳನ್ನು ಹಾಳುಮಾಡಲು ಅನುಮತಿಸಿದ್ದೀರಿ.</verse>
				<verse number="41">ದಾರಿಯಲ್ಲಿ ಹೋಗುವವರು ಅವನನ್ನು ಕೊಳ್ಳೆ ಹೊಡೆಯುತ್ತಾರೆ. ತನ್ನ ನೆರೆಯವರಿಗೆ ಅವನು ನಿಂದೆಯಾಗಿದ್ದಾನೆ.</verse>
				<verse number="42">ಅವನ ವೈರಿಗಳ ಬಲಗೈ ಉನ್ನತವಾಗಿದೆ. ಅವನ ವೈರಿಗಳೆಲ್ಲಾ ಆನಂದಿಸುತ್ತಿದ್ದಾರೆ.</verse>
				<verse number="43">ಅವನ ಖಡ್ಗದ ಮೊನೆ ಮೊಂಡಾಗಿದೆ. ಯುದ್ಧದಲ್ಲಿ ನೀವು ಅವನನ್ನು ನಿಲ್ಲುವಂತೆ ಮಾಡಲಿಲ್ಲ.</verse>
				<verse number="44">ಅವನ ಪ್ರಭೆ ಮುಗಿದು ಹೋಗಿದೆ. ಅವನ ಸಿಂಹಾಸನ ಉರುಳಿಬಿಟ್ಟಿದೆ.</verse>
				<verse number="45">ಅವನ ಯೌವನದ ದಿವಸಗಳು ಕಡಿಮೆಯಾಗಿದೆ. ನಾಚಿಕೆ ಎಂಬ ವಸ್ತ್ರ ಅವನನ್ನು ಮುಚ್ಚಲು ನೀವು ಅನುಮತಿಸಿದ್ದೀರಿ.</verse>
				<verse number="46">ಯೆಹೋವ ದೇವರೇ, ಇನ್ನೂ ಎಷ್ಟರವರೆಗೆ? ಸದಾಕಾಲಕ್ಕೆ ನೀವು ಅಡಗಿಕೊಳ್ಳುವಿರಾ? ನಿಮ್ಮ ಬೇಸರವು ಬೆಂಕಿಯ ಹಾಗೆ ಉರಿಯುವುದು ಎಷ್ಟರವರೆಗೆ?</verse>
				<verse number="47">ನನ್ನ ಆಯುಸ್ಸು ಎಷ್ಟು ಕಡಿಮೆ ಎಂದು ಜ್ಞಾಪಕಮಾಡಿಕೊಳ್ಳಿರಿ. ನಿರ್ಮಿಸಿದ ಎಲ್ಲಾ ಮನುಷ್ಯರೂ ವ್ಯರ್ಥವಾಗಿದ್ದಾರೆ.</verse>
				<verse number="48">ಮರಣವನ್ನು ಕಾಣದೆ ಬದುಕುವಂಥವರು ಯಾರು? ಸಮಾಧಿಯ ಶಕ್ತಿಯಿಂದ ಪ್ರಾಣವನ್ನು ತಪ್ಪಿಸಿಕೊಳ್ಳುವಂಥವರು ಯಾರು?</verse>
				<verse number="49">ಯೆಹೋವ ದೇವರೇ, ನಿಮ್ಮ ಸತ್ಯದಲ್ಲಿ ನೀವು ದಾವೀದನಿಗೆ ಆಣೆಯಿಟ್ಟೆ. ನಿಮ್ಮ ಮೊದಲಿನ ಮಹಾ ಪ್ರೀತಿ ಎಲ್ಲಿ?</verse>
				<verse number="50">ಯೆಹೋವ ದೇವರೇ, ನಿಮ್ಮ ಸೇವಕನು ನಿಂದೆ ಹೊಂದಿರುವದನ್ನು ನೆನಸಿಕೊಳ್ಳಿರಿ. ಎಲ್ಲಾ ರಾಷ್ಟ್ರಗಳ ಅಪಹಾಸ್ಯವನ್ನು ನಾನು ಹೇಗೆ ಸಹಿಸಿದೆನೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.</verse>
				<verse number="51">ಯೆಹೋವ ದೇವರೇ, ನಿಮ್ಮ ಶತ್ರುಗಳು ನಿಂದಿಸುತ್ತಿದ್ದಾರೆ. ನಿಮ್ಮ ಅಭಿಷಿಕ್ತನ ಹೆಜ್ಜೆ ಹೆಜ್ಜೆಗೂ ನಿಂದಿಸುತ್ತಾರಲ್ಲಾ?</verse>
				<verse number="52">ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಆಮೆನ್.</verse>
			</chapter>
			<chapter number="90">
				<verse number="1">ಯೆಹೋವ ದೇವರೇ, ತಲತಲಾಂತರಗಳಲ್ಲಿ ನೀವು ನಮ್ಮ ವಾಸಸ್ಥಾನವಾಗಿದ್ದೀರಿ.</verse>
				<verse number="2">ಬೆಟ್ಟಗಳು ಹುಟ್ಟುವುದಕ್ಕಿಂತ ಮುಂಚೆಯೂ ನೀವು ಲೋಕವನ್ನೂ ನಿರ್ಮಿಸುವುದಕ್ಕಿಂತ ಮುಂಚೆಯೂ ಯುಗಯುಗಾಂತರಕ್ಕೂ ನೀವು ದೇವರಾಗಿದ್ದೀರಿ.</verse>
				<verse number="3">ನೀವು ಮನುಷ್ಯರನ್ನು ಪುನಃ ಮಣ್ಣಿಗೆ ಸೇರಿಸುತ್ತೀರಿ. “ಮನುಷ್ಯ ಪುತ್ರರೇ, ಮಣ್ಣಿಗೆ ಮರಳಿರಿ,” ಎಂದು ಹೇಳುತ್ತೀರಿ.</verse>
				<verse number="4">ಸಾವಿರ ವರ್ಷಗಳು ನಿಮ್ಮ ದೃಷ್ಟಿಗೆ ಕಳೆದುಹೋದ ಒಂದು ದಿವಸದ ಹಾಗೆಯೂ ರಾತ್ರಿ ಜಾವದ ಹಾಗೆಯೂ ಇವೆ.</verse>
				<verse number="5">ನೀವು ಜನರನ್ನು ಮರಣ ನಿದ್ರೆಯ ಪ್ರವಾಹದಂತೆ ಹೋಗಲು ಅನುಮತಿಸುತ್ತೀರಿ. ಅವರು ಬೆಳಿಗ್ಗೆ ಬೆಳೆಯುವ ಹುಲ್ಲಿನ ಹಾಗೆ ಇದ್ದಾರೆ.</verse>
				<verse number="6">ಅದು ಬೆಳಿಗ್ಗೆ ಅರಳಿ ಬೆಳೆಯುತ್ತದೆ. ಸಂಜೆಯಲ್ಲಿ ಒಣಗಿ ಬಿದ್ದು ಹೋಗುತ್ತದೆ.</verse>
				<verse number="7">ನಾವು ನಿಮ್ಮ ಬೇಸರದಿಂದ ಬಾಧಿತರಾಗಿದ್ದೇವೆ. ನಿಮ್ಮ ಖಂಡನೆಯಿಂದ ತಲ್ಲಣಿಸುತ್ತೇವೆ.</verse>
				<verse number="8">ನಮ್ಮ ಅಕ್ರಮಗಳನ್ನು ನಿಮ್ಮ ಮುಂದೆ ಇಟ್ಟಿದ್ದೀರಿ. ನಾವು ಮುಚ್ಚಿಟ್ಟುಕೊಂಡಿರುವ ಪಾಪಗಳು ನಿಮ್ಮ ಸನ್ನಿಧಿಯಲ್ಲಿವೆ.</verse>
				<verse number="9">ನಮ್ಮ ದಿವಸಗಳೆಲ್ಲಾ ನಿಮ್ಮ ಖಂಡನೆಯಿಂದಲೇ ದಾಟಿಹೋದವು. ನಮ್ಮ ವರ್ಷಗಳನ್ನು ನಿಟ್ಟುಸಿರಿನಲ್ಲಿ ಕಳೆಯುತ್ತಿದ್ದೇವೆ.</verse>
				<verse number="10">ನಮ್ಮ ಜೀವನದ ದಿನಗಳು ಎಪ್ಪತ್ತು ವರ್ಷ, ಬಲದಿಂದಿದ್ದರೆ ಎಂಬತ್ತು ವರ್ಷ. ಆದಾಗ್ಯೂ ಅವುಗಳ ಉತ್ತಮ ವರ್ಷಗಳು ಕಷ್ಟವೂ ಪ್ರಯಾಸವೂ ಆಗಿವೆ. ನಮ್ಮ ದಿನಗಳು ಬೇಗ ತೀರಿಹೋಗುತ್ತವೆ. ನಾವು ಹಾರಿಹೋಗುತ್ತೇವೆ.</verse>
				<verse number="11">ನಿಮ್ಮ ಕೋಪದ ಶಕ್ತಿಯನ್ನು ತಿಳಿದವರ‍್ಯಾರು? ನಿಮ್ಮ ಮೇಲಿನ ಭಯಭಕ್ತಿಗೆ ಕಾರಣವಾಗಿರುವ ನಿಮ್ಮ ಖಂಡನೆಯನ್ನು ಗ್ರಹಿಸುವವರ‍್ಯಾರು?</verse>
				<verse number="12">ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿನಗಳನ್ನು ಲೆಕ್ಕಿಸುವುದಕ್ಕೆ ನಮಗೆ ಕಲಿಸಿಕೊಡಿರಿ.</verse>
				<verse number="13">ಯೆಹೋವ ದೇವರೇ, ಮನಸ್ಸು ಮಾರ್ಪಡಿಸಿಕೊಳ್ಳಿರಿ. ನೀವು ಎಷ್ಟರವರೆಗೆ ಬೇಸರಗೊಳ್ಳುವಿರಿ? ನಿಮ್ಮ ಸೇವಕರ ವಿಷಯದಲ್ಲಿ ಅನುಕಂಪ ತೋರಿಸಿರಿ.</verse>
				<verse number="14">ಬೆಳಿಗ್ಗೆ ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನಮ್ಮನ್ನು ತೃಪ್ತಿಪಡಿಸಿರಿ. ಆಗ ನಮ್ಮ ದಿನಗಳೆಲ್ಲಾ ಉತ್ಸಾಹ ಧ್ವನಿಗೈದು ನಿಮ್ಮಲ್ಲಿ ಸಂತೋಷಪಡುವೆವು.</verse>
				<verse number="15">ನೀವು ನಮ್ಮನ್ನು ಬಾಧಿಸಿದಷ್ಟು ಕಾಲ ಹರ್ಷಗೊಳಿಸಿರಿ. ನಾವು ತೊಂದರೆಯನ್ನು ನೋಡಿದಷ್ಟು ವರ್ಷಗಳು ನಮ್ಮನ್ನು ಸಂತೋಷಪಡಿಸಿರಿ.</verse>
				<verse number="16">ನಿಮ್ಮ ಸೇವಕರಿಗೆ ನಿಮ್ಮ ಕೃತ್ಯಗಳನ್ನು ಪ್ರಕಟಿಸಿರಿ. ಅವರ ಮಕ್ಕಳಿಗೆ ನಿಮ್ಮ ಪ್ರಭೆಯೂ ತೋರಿ ಬರಲಿ.</verse>
				<verse number="17">ನಮ್ಮ ದೇವರಾದ ಯೆಹೋವ ದೇವರ ಮೆಚ್ಚುಗೆಯು ನಮ್ಮ ಮೇಲೆ ಇರಲಿ. ನಮ್ಮ ಕೈಗಳ ಕೆಲಸವನ್ನು ಸ್ಥಿರಪಡಿಸಿರಿ. ಹೌದು, ನಮ್ಮ ಕೈಗಳ ಕೆಲಸವನ್ನು ಸ್ಥಾಪಿಸಿರಿ.</verse>
			</chapter>
			<chapter number="91">
				<verse number="1">ಮಹೋನ್ನತ ದೇವರ ಆಶ್ರಯದಲ್ಲಿ ವಾಸಿಸುವವರು ಸರ್ವಶಕ್ತರ ನೆರಳಿನಲ್ಲಿ ವಿಶ್ರಮಿಸುವರು.</verse>
				<verse number="2">“ನನ್ನ ಆಶ್ರಯವೂ, ನನ್ನ ಕೋಟೆಯೂ, ನಾನು ಭರವಸೆ ಇಡುವ ನನ್ನ ದೇವರೂ ಎಂದು ನಾನು ಯೆಹೋವ ದೇವರಿಗೆ ಹೇಳುವೆನು.”</verse>
				<verse number="3">ನಿಶ್ಚಯವಾಗಿ ದೇವರು ನಿಮ್ಮನ್ನು ಬೇಡನ ಉರುಲಿನಿಂದ ರಕ್ಷಿಸುವರು. ಮರಣಾಂತಿಕವಾದ ಸಾಂಕ್ರಾಮಿಕ ರೋಗದಿಂದಲೂ ಬಿಡಿಸುವರು.</verse>
				<verse number="4">ತಮ್ಮ ರೆಕ್ಕೆಗಳಿಂದ ನಿಮ್ಮನ್ನು ಹೊದಿಸುವರು. ದೇವರ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿರಿ. ದೇವರ ಸತ್ಯತೆಯು ನಿಮ್ಮ ಖೇಡ್ಯವೂ ಕೋಟೆಯೂ ಆಗಿರುವುದು.</verse>
				<verse number="5">ರಾತ್ರಿಯ ಭಯಂಕರತೆಗೆ ನೀನು ಅಂಜಬೇಕಾಗಿಲ್ಲ, ಹಗಲಿನಲ್ಲಿ ಹಾರುವ ಬಾಣಕ್ಕೂ ಹೆದರಬೇಕಾಗಿರುವುದಿಲ್ಲ.</verse>
				<verse number="6">ಅಂಧಕಾರದಲ್ಲಿ ಬೆನ್ನಟ್ಟಿ ಬರುವ ವಿಪತ್ತಿಗೆ ಕಳವಳಪಡದಿರುವೆ. ಮಧ್ಯಾಹ್ನದಲ್ಲಿ ಹಾಳುಮಾಡುವ ವ್ಯಾಧಿಗೂ ನೀನು ಭಯಪಡದಿರುವೆ.</verse>
				<verse number="7">ನಿಮ್ಮ ಪಕ್ಕದಲ್ಲಿ ಸಾವಿರ ಜನರು ಬಿದ್ದರೂ ನಿಮ್ಮ ಬಲಗಡೆಯಲ್ಲಿ ಹತ್ತು ಸಾವಿರ ಜನರು ಬಿದ್ದಾಗ್ಯೂ, ನಿಮ್ಮ ಸಮೀಪಕ್ಕೆ ಅದು ಬರುವುದಿಲ್ಲ.</verse>
				<verse number="8">ನಿನ್ನ ಕಣ್ಣುಗಳಿಂದ ಮಾತ್ರ ನೀನು ಗಮನಿಸುವೆ. ದುಷ್ಟರಿಗೆ ಪ್ರತಿದಂಡನೆ ಆಗುವುದನ್ನು ಸಹ ನೀನು ಕಾಣುವೆ.</verse>
				<verse number="9">“ಮಹೋನ್ನತ ದೇವರು ನಮ್ಮ ಆಶ್ರಯ,” ಎಂದು ಹೇಳುವದಾದರೆ, ಯೆಹೋವ ದೇವರು ನಿಮ್ಮ ನಿವಾಸವಾಗಿ ಮಾಡಿಕೊಂಡರೆ,</verse>
				<verse number="10">ಯಾವ ಕೇಡೂ ನಿಮ್ಮನ್ನು ಮುಟ್ಟದು, ಯಾವ ವಿಪತ್ತು ನಿಮ್ಮನ್ನು ಸಮೀಪಿಸುವುದಿಲ್ಲ.</verse>
				<verse number="11">ಏಕೆಂದರೆ ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವುದಕ್ಕೆ ದೇವರು ತಮ್ಮ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವರು.</verse>
				<verse number="12">ನಿಮ್ಮ ಪಾದಗಳು ಕಲ್ಲಿಗೆ ತಗಲದಂತೆ ದೇವದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು.</verse>
				<verse number="13">ಸಿಂಹದ ಮೇಲೆಯೂ ಸರ್ಪದ ಮೇಲೆಯೂ ನಡೆಯುವೆ. ಪ್ರಾಯದ ಸಿಂಹವನ್ನೂ ಘಟಸರ್ಪವನ್ನೂ ತುಳಿದುಬಿಡುವೆ.</verse>
				<verse number="14">“ಆತನು ನನ್ನನ್ನು ಪ್ರೀತಿಸುವುದರಿಂದ ಆತನನ್ನು ಸಂರಕ್ಷಿಸುವೆನು. ಆತನು ನನ್ನ ನಾಮವನ್ನು ಸ್ವೀಕರಿಸಿದ್ದರಿಂದ ಆತನನ್ನು ಕಾಪಾಡುವೆನು.</verse>
				<verse number="15">ಆತನು ನನ್ನನ್ನು ಕರೆಯುವನು ನಾನು ಆತನಿಗೆ ಉತ್ತರಕೊಡುವೆನು. ಇಕ್ಕಟ್ಟಿನಲ್ಲಿ ನಾನು ಆತನ ಸಂಗಡ ಇದ್ದು, ಆತನನ್ನು ಘನಪಡಿಸುವೆನು.</verse>
				<verse number="16">ದೀರ್ಘಾಯುಷ್ಯದಿಂದ ಆತನನ್ನು ತೃಪ್ತಿಪಡಿಸಿ, ನನ್ನ ರಕ್ಷಣೆಯನ್ನು ಆತನಿಗೆ ತೋರಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
			</chapter>
			<chapter number="92">
				<verse number="1">ಯೆಹೋವ ದೇವರೇ, ನಿಮ್ಮನ್ನು ಕೊಂಡಾಡುವುದು ಒಳ್ಳೆಯದು. ಮಹೋನ್ನತರೇ, ನಿಮ್ಮ ಹೆಸರನ್ನು ಕೀರ್ತಿಸುವುದು ಒಳ್ಳೆಯದು.</verse>
				<verse number="2">ಬೆಳಿಗ್ಗೆ ನಿಮ್ಮ ಪ್ರೀತಿ ಕರುಣೆಯನ್ನೂ ಪ್ರತಿ ರಾತ್ರಿ ನಿಮ್ಮ ನಂಬಿಕೆಯನ್ನೂ ಸಾರುವುದು ಒಳ್ಳೆಯದು.</verse>
				<verse number="3">ಹತ್ತು ತಂತಿವಾದ್ಯದಿಂದಲೂ ವೀಣೆಯಿಂದಲೂ ಕಿನ್ನರಿಯ ಘನಸ್ವರದಿಂದಲೂ ಬಾರಿಸುವುದು ಒಳ್ಳೆಯದು.</verse>
				<verse number="4">ಯೆಹೋವ ದೇವರೇ, ನಿಮ್ಮ ಕ್ರಿಯೆಯಿಂದ ನನ್ನನ್ನು ಸಂತೋಷಪಡಿಸಿದ್ದೀರಿ. ನಿಮ್ಮ ಕೈಕೆಲಸಗಳಲ್ಲಿ ಜಯಧ್ವನಿಗೈಯುತ್ತೇನೆ.</verse>
				<verse number="5">ಯೆಹೋವ ದೇವರೇ, ನಿಮ್ಮ ಕೃತ್ಯಗಳು ಎಷ್ಟೋ ಮಹತ್ತಾದದ್ದು. ನಿಮ್ಮ ಯೋಚನೆಗಳು ಬಹು ಆಳವಾಗಿವೆ.</verse>
				<verse number="6">ಇದನ್ನು ಬುದ್ಧಿಹೀನ ಮನುಷ್ಯನು ತಿಳಿದುಕೊಳ್ಳನು. ಮೂರ್ಖನು ಇದನ್ನು ಗ್ರಹಿಸನು.</verse>
				<verse number="7">ದುಷ್ಟರು ಹುಲ್ಲಿನ ಹಾಗೆ ಚಿಗುರಿದರೂ ಅಕ್ರಮ ಮಾಡುವವರೆಲ್ಲರು ವೃದ್ಧಿ ಆದರೂ ಅವರು ನಿತ್ಯ ದಂಡನೆಗೆ ಗುರಿಯಾಗುವರು.</verse>
				<verse number="8">ಯೆಹೋವ ದೇವರೇ, ನೀವಾದರೋ ಎಂದೆಂದಿಗೂ ಉನ್ನತರಾಗಿದ್ದೀರಿ.</verse>
				<verse number="9">ನಿಜವಾಗಿಯೂ ನಿಮ್ಮ ಶತ್ರುಗಳು ಯೆಹೋವ ದೇವರೇ, ನಿಮ್ಮ ಶತ್ರುಗಳು ನಾಶವಾಗುವರು. ಕೇಡು ಮಾಡುವವರೆಲ್ಲರು ಚದರಿಹೋಗುವರು.</verse>
				<verse number="10">ಆದರೆ ನೀವು ನನ್ನ ಬಲವನ್ನು ಕಾಡುಕೋಣದ ಕೊಂಬಿನ ಹಾಗೆ ಬಲಪಡಿಸುವಿರಿ. ನಾನು ನೂತನ ತೈಲದಿಂದ ಅಭಿಷಿಕ್ತನಾಗುವೆನು.</verse>
				<verse number="11">ನನ್ನ ಕಣ್ಣು ನನ್ನ ವಿರೋಧಿಗಳ ಸೋಲನ್ನು ದೃಷ್ಟಿಸುವುದು. ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳ ವಿಪತ್ತನ್ನು ಕುರಿತು ನಾನು ಕೇಳಿಸಿಕೊಳ್ಳುವೆ.</verse>
				<verse number="12">ನೀತಿವಂತರು ಖರ್ಜೂರ ಮರದ ಹಾಗೆ ವೃದ್ಧಿಯಾಗುವರು. ಅವರು ಲೆಬನೋನಿನಲ್ಲಿರುವ ದೇವದಾರಿನ ಹಾಗೆ ಬೆಳೆಯುವರು.</verse>
				<verse number="13">ಅವರು ಯೆಹೋವ ದೇವರ ಆಲಯದಲ್ಲಿ ನೆಟ್ಟ ಸಸಿಗಳಂತಿರುವರು. ನಮ್ಮ ದೇವರ ಅಂಗಳಗಳಲ್ಲಿ ಅವರು ವೃದ್ಧಿ ಆಗುವರು.</verse>
				<verse number="14">ಮುದಿಪ್ರಾಯದಲ್ಲಿಯೂ ಫಲ ಕೊಡುವರು. ಅವರು ಹಸಿರಾಗಿ ಶೋಭಿಸುವರು.</verse>
				<verse number="15">“ಯೆಹೋವ ದೇವರು ಯಥಾರ್ಥವಂತರೂ ನನ್ನ ಬಂಡೆಯೂ ಆಗಿದ್ದಾರೆ. ಅವರಲ್ಲಿ ಅನೀತಿ ಇರುವುದಿಲ್ಲ,” ಎಂದು ನೀತಿವಂತರು ಘೋಷಿಸುವರು.</verse>
			</chapter>
			<chapter number="93">
				<verse number="1">ಯೆಹೋವ ದೇವರು ಆಳಿಕೆ ಮಾಡುತ್ತಿದ್ದಾರೆ. ಘನತೆಯನ್ನು ಹೊದ್ದುಕೊಂಡಿದ್ದಾರೆ. ಬಲದಿಂದ ತಮ್ಮ ನಡುವನ್ನು ಕಟ್ಟಿಕೊಂಡಿದ್ದಾರೆ. ಆದುದರಿಂದ ಲೋಕವು ಸಹ ಸ್ಥಿರವಾಗಿದೆ, ಕದಲುವುದಿಲ್ಲ.</verse>
				<verse number="2">ದೇವರೇ, ನಿಮ್ಮ ಸಿಂಹಾಸನವು ಪೂರ್ವಕಾಲದಿಂದ ಸ್ಥಿರವಾಗಿದೆ. ಯುಗಯುಗದಿಂದ ನೀವು ಇದ್ದೀರಿ.</verse>
				<verse number="3">ಯೆಹೋವ ದೇವರೇ, ಸಮುದ್ರಗಳಲ್ಲಿ ಪ್ರವಾಹಗಳು ಮೊರೆಯುತ್ತಿವೆ. ಸಮುದ್ರಗಳು ತಮ್ಮ ಧ್ವನಿಯನ್ನು ಎತ್ತಿವೆ. ಸಮುದ್ರಗಳು ತಮ್ಮ ಅಲೆಗಳ ಘೋಷವನ್ನು ಎತ್ತಿವೆ.</verse>
				<verse number="4">ಮಹಾಸಾಗರದ ಶಬ್ದಕ್ಕಿಂತಲೂ, ಸಮುದ್ರದ ಬಲವಾದ ಅಲೆಗಳಿಗಿಂತಲೂ ಉನ್ನತದಲ್ಲಿರುವ ಯೆಹೋವ ದೇವರು ಬಲಿಷ್ಠರಾಗಿದ್ದಾರೆ.</verse>
				<verse number="5">ದೇವರೇ, ನಿಮ್ಮ ಶಾಸನಗಳು ಬಹಳ ನಿಶ್ಚಯವಾದವುಗಳು. ಯೆಹೋವ ದೇವರೇ, ಪರಿಶುದ್ಧತೆಯು ಸದಾಕಾಲ ನಿಮ್ಮ ಆಲಯವನ್ನು ಅಲಂಕರಿಸುತ್ತದೆ.</verse>
			</chapter>
			<chapter number="94">
				<verse number="1">ಯೆಹೋವ ದೇವರೇ, ನೀವು ಪ್ರತೀಕಾರ ಸಲ್ಲಿಸುವ ದೇವರಾಗಿದ್ದೀರಿ. ಮುಯ್ಯಿ ತೀರಿಸುವವರು ನೀವೇ; ದೇವರೇ, ನ್ಯಾಯ ತೀರಿಸುವಂತೆ ನಿಮ್ಮನ್ನು ಪ್ರಕಟಿಸಿಕೊಳ್ಳಿರಿ.</verse>
				<verse number="2">ಭೂಲೋಕದ ನ್ಯಾಯಾಧಿಪತಿಯೇ, ಗರ್ವಿಷ್ಠರಿಗೆ ತಕ್ಕ ಪ್ರತೀಕಾರವನ್ನು ಸಲ್ಲಿಸ ಬನ್ನಿರಿ.</verse>
				<verse number="3">ಯೆಹೋವ ದೇವರೇ, ಎಲ್ಲಿಯವರೆಗೆ? ದುಷ್ಟರು ಎಷ್ಟರವರೆಗೆ ಹಿಗ್ಗುತ್ತಿರಬೇಕು?</verse>
				<verse number="4">ಕೆಡುಕರು ಉಬ್ಬಿಕೊಂಡು ಮಾತನಾಡುತ್ತಾರೆ. ಕೇಡು ಮಾಡುವವರೆಲ್ಲರೂ ಕೊಚ್ಚಿಕೊಳ್ಳುತ್ತಾರೆ.</verse>
				<verse number="5">ಯೆಹೋವ ದೇವರೇ, ನಿಮ್ಮ ಜನರನ್ನು ಅವರು ಕುಗ್ಗಿಸುತ್ತಾರೆ. ನಿಮ್ಮ ಬಾಧ್ಯತೆಯನ್ನು ಬಾಧಿಸುತ್ತಾರೆ.</verse>
				<verse number="6">ವಿಧವೆಯನ್ನೂ ಪರದೇಶಸ್ಥನನ್ನೂ ಅವರು ಹತ್ಯಮಾಡುತ್ತಾರೆ. ದಿಕ್ಕಿಲ್ಲದವರನ್ನು ಹತಮಾಡುತ್ತಾರೆ.</verse>
				<verse number="7">“ಯೆಹೋವ ದೇವರು ನೋಡುವುದಿಲ್ಲ, ಯಾಕೋಬನ ದೇವರು ಗ್ರಹಿಸುವುದಿಲ್ಲ,” ಎಂದು ಅವರು ಹೇಳುತ್ತಾರೆ.</verse>
				<verse number="8">ಜನರಲ್ಲಿ ಬುದ್ಧಿಹೀನರೇ, ನೀವು ಗ್ರಹಿಸಿರಿ. ಮೂರ್ಖರೇ, ಯಾವಾಗ ಬುದ್ಧಿವಂತರಾಗುವಿರಿ?</verse>
				<verse number="9">ಕಿವಿಯನ್ನು ನಿರ್ಮಿಸಿದ ದೇವರು ಕೇಳದಿರುವರೇ? ಕಣ್ಣನ್ನು ರೂಪಿಸಿದವರು ನೋಡುವುದಿಲ್ಲವೇ?</verse>
				<verse number="10">ರಾಷ್ಟ್ರಗಳಿಗೆ ಶಿಕ್ಷಣ ಕೊಡುವ ದೇವರು ಶಿಕ್ಷಿಸುವುದಿಲ್ಲವೋ? ಮಾನವನಿಗೆ ಕಲಿಸುವ ದೇವರಲ್ಲಿ ಜ್ಞಾನದ ಕೊರತೆಯಿದೆಯೋ?</verse>
				<verse number="11">ಮನುಷ್ಯನ ಯೋಚನೆಗಳು ವ್ಯರ್ಥವಾದವುಗಳೆಂದು ಯೆಹೋವ ದೇವರು ತಿಳಿದುಕೊಳ್ಳುತ್ತಾರೆ.</verse>
				<verse number="12">ಯೆಹೋವ ದೇವರೇ, ನೀವು ಯಾರನ್ನು ಶಿಕ್ಷಿಸುವಿರೋ ಅಂಥವರು ಧನ್ಯರು. ನಿಮ್ಮ ನಿಯಮದಿಂದ ಯಾರಿಗೆ ಕಲಿಸಿಕೊಡುವಿರೋ ಅವರು ಧನ್ಯರು.</verse>
				<verse number="13">ದುಷ್ಟನಿಗಾಗಿ ಕುಣಿಯು ಅಗಿಯುವವರೆಗೆ ಅಂಥವನಿಗೆ ವಿಶ್ರಾಂತಿಯನ್ನು ಕೊಡುವಿರಿ.</verse>
				<verse number="14">ಯೆಹೋವ ದೇವರು ತಮ್ಮ ಜನರನ್ನು ತಿರಸ್ಕರಿಸುವುದಿಲ್ಲ. ದೇವರು ತಮ್ಮ ಬಾಧ್ಯತೆಯಾಗಿರುವವರನ್ನು ಎಂದೂ ಮರೆಯುವುದಿಲ್ಲ.</verse>
				<verse number="15">ನ್ಯಾಯ ನಿಯಮವು ನೀತಿಯ ಮೇಲೆ ಅವಲಂಬಿಸಿರುವುದು; ಯಥಾರ್ಥ ಹೃದಯದವರೆಲ್ಲರೂ ಅದನ್ನು ಹಿಂಬಾಲಿಸುವರು.</verse>
				<verse number="16">ನನಗೋಸ್ಕರ ದುರ್ಮಾರ್ಗಿಗಳಿಗೆ ವಿರೋಧವಾಗಿ ಏಳುವವನ್ಯಾರು? ಅಪರಾಧ ಮಾಡುವವರಿಗೆ ವಿರೋಧವಾಗಿ ನನಗೋಸ್ಕರ ನಿಂತು ಕೊಳ್ಳುವವನ್ಯಾರು?</verse>
				<verse number="17">ಯೆಹೋವ ದೇವರು ನನಗೆ ಸಹಾಯ ಕೊಡದಿದ್ದರೆ, ನಾನು ಬೇಗನೇ ಮರಣದ ಮೌನದಲ್ಲಿ ವಾಸಿಸುತ್ತಿದ್ದೆನು.</verse>
				<verse number="18">“ನನ್ನ ಕಾಲು ಜಾರುತ್ತಿದೆ,” ಎಂದು ನಾನು ಹೇಳುತ್ತಿರುವಾಗಲೇ, ಯೆಹೋವ ದೇವರೇ, ನಿಮ್ಮ ಪ್ರೀತಿಯು ನನ್ನನ್ನು ಎತ್ತಿ ಹಿಡಿಯಿತು.</verse>
				<verse number="19">ನನ್ನ ಚಿಂತೆಗಳು ನನ್ನೊಳಗೆ ಹೆಚ್ಚುತ್ತಿರುವಾಗ, ನಿಮ್ಮ ಸಂತೈಸುವಿಕೆಯು ನನ್ನ ಮನಸ್ಸನ್ನು ಆನಂದಪಡಿಸುತ್ತದೆ.</verse>
				<verse number="20">ತೀರ್ಪುಗಳಿಂದ ಕೇಡನ್ನು ಕಲ್ಪಿಸುವ ಅಪರಾಧದ ನ್ಯಾಯಾಸನವು ನಿಮ್ಮ ಸಂಗಡ ಅನ್ಯೋನ್ಯವಾಗಿರುವುದೋ?</verse>
				<verse number="21">ನೀತಿವಂತನ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ಅವರ ನಿರಪರಾಧಿಗಳನ್ನು ಮರಣಕ್ಕೆ ಒಪ್ಪಿಸುತ್ತಾರೆ.</verse>
				<verse number="22">ಆದರೆ ಯೆಹೋವ ದೇವರು ನನಗೆ ದುರ್ಗವೂ, ನನ್ನ ದೇವರೂ, ನನ್ನ ಆಶ್ರಯದ ಬಂಡೆಯೂ ಆಗಿದ್ದಾರೆ.</verse>
				<verse number="23">ವೈರಿಯ ಅಪರಾಧವು ಅವರ ಮೇಲೆಯೇ ತಿರುಗಿ ಬೀಳಲಿ; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಯೆಹೋವ ದೇವರು ಅವರನ್ನು ಸಂಹರಿಸಿ ಬಿಡುವನು.</verse>
			</chapter>
			<chapter number="95">
				<verse number="1">ಬನ್ನಿರಿ, ಯೆಹೋವ ದೇವರಿಗೆ ಉತ್ಸಾಹ ಗೀತೆಯನ್ನು ಹಾಡೋಣ; ನಮ್ಮ ರಕ್ಷಣೆಯ ಬಂಡೆಯಾಗಿರುವ ದೇವರಿಗೆ ಜಯಧ್ವನಿ ಮಾಡೋಣ.</verse>
				<verse number="2">ಧನ್ಯವಾದದೊಡನೆ ಅವರ ಸನ್ನಿಧಿಯಲ್ಲಿ ಮುಂದೆ ಬಂದು ಕೀರ್ತನೆಗಳಿಂದ ಅವರಿಗೆ ಜಯಧ್ವನಿ ಮಾಡೋಣ.</verse>
				<verse number="3">ಯೆಹೋವ ದೇವರು ಮಹಾ ದೇವರು, ಎಲ್ಲಾ ದೇವರುಗಳ ಮೇಲೆ ಮಹಾರಾಜರೂ ಆಗಿದ್ದಾರೆ.</verse>
				<verse number="4">ಅವರ ಕೈಯಲ್ಲಿ ಭೂಮಿಯ ಆಳವಾದ ಸ್ಥಳಗಳು ಇವೆ; ಬೆಟ್ಟಗಳ ಬಲವು ಅವರದೇ.</verse>
				<verse number="5">ಸಮುದ್ರವು ಅವರಿಗೆ ಸೇರಿದ್ದು; ಅವರು ಅದನ್ನು ಸೃಷ್ಟಿಸಿದರು; ಅವರ ಕೈಗಳು ಒಣ ಭೂಮಿಯನ್ನು ರೂಪಿಸಿದವು.</verse>
				<verse number="6">ಬನ್ನಿರಿ, ಆರಾಧಿಸೋಣ; ನಮ್ಮನ್ನು ಸೃಷ್ಟಿಸಿದ ಯೆಹೋವ ದೇವರ ಮುಂದೆ ಮೊಣಕಾಲು ಊರೋಣ.</verse>
				<verse number="7">ಅವರು ನಮ್ಮ ದೇವರು; ನಾವು ಅವರ ಹುಲ್ಲುಗಾವಲಿನ ಪ್ರಜೆಗಳಾಗಿದ್ದೇವೆ, ನಾವು ಅವರು ಪರಿಪಾಲಿಸುವ ಮಂದೆಯೂ ಆಗಿದ್ದೇವೆ. ನೀವು ಈ ಹೊತ್ತು ಅವರ ಸ್ವರಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೆಯದು.</verse>
				<verse number="8">“ನೀವು ಮೆರೀಬದಲ್ಲಿ ಮಾಡಿದಂತೆ, ಹೌದು, ಅಂದು ನೀವು ಮರುಭೂಮಿಯ ಮಸ್ಸಾ ಎಂಬ ಸ್ಥಳದಲ್ಲಿ ಮಾಡಿದಂತೆ, ನಿಮ್ಮ ಹೃದಯವನ್ನು ಕಠಿಣಪಡಿಸಬೇಡಿರಿ.</verse>
				<verse number="9">ನಾನು ಮಾಡಿದ್ದನ್ನು ಕಂಡಿದ್ದರೂ, ಅಲ್ಲಿ ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ, ನನ್ನನ್ನು ಪರೀಕ್ಷಿಸಿದರು.</verse>
				<verse number="10">ನಾಲ್ವತ್ತು ವರ್ಷ ಆ ಸಂತತಿಗೆ ಬೇಸರಗೊಂಡು, ‘ಇವರು ತಮ್ಮ ಹೃದಯದಲ್ಲಿ ತಪ್ಪಿಹೋಗುವ ಜನರಾಗಿದ್ದಾರೆ, ನನ್ನ ಮಾರ್ಗಗಳನ್ನು ಇವರು ಅರಿಯರು,’ ಎಂದೆನು.</verse>
				<verse number="11">ಆದ್ದರಿಂದ, ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ,’ ” ಎಂದು ನಾನು ಅಸಂತೋಷದಿಂದ ಆಣೆ ಇಟ್ಟುಕೊಂಡೆನು.</verse>
			</chapter>
			<chapter number="96">
				<verse number="1">ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ; ಸಮಸ್ತ ಭೂನಿವಾಸಿಗಳೇ, ಯೆಹೋವ ದೇವರಿಗೆ ಹಾಡಿರಿ.</verse>
				<verse number="2">ಯೆಹೋವ ದೇವರಿಗೆ ಹಾಡಿರಿ, ಅವರ ನಾಮವನ್ನು ಸ್ತುತಿಸಿರಿ; ಅವರ ರಕ್ಷಣೆಯನ್ನು ದಿನಂಪ್ರತಿ ಸಾರಿ ಹೇಳಿರಿ.</verse>
				<verse number="3">ಜನಾಂಗಗಳಲ್ಲಿ ಅವರ ಘನತೆಯನ್ನೂ, ಎಲ್ಲಾ ಜನಾಂಗಗಳಲ್ಲಿ ಅವರ ಅದ್ಭುತಗಳನ್ನೂ ವಿವರಿಸಿರಿ.</verse>
				<verse number="4">ಯೆಹೋವ ದೇವರು ಮಹೋನ್ನತರಾಗಿದ್ದಾರೆ, ಬಹು ಸ್ತುತಿಗೆ ಪಾತ್ರರೂ ಆಗಿದ್ದಾರೆ; ಅವರು ಎಲ್ಲಾ ದೇವರುಗಳಿಗಿಂತ ಬಹುಭಯಭಕ್ತಿಗೆ ಪಾತ್ರರಾಗಿದ್ದಾರೆ.</verse>
				<verse number="5">ಏಕೆಂದರೆ ಜನಾಂಗಗಳ ದೇವರುಗಳೆಲ್ಲಾ ವಿಗ್ರಹಗಳಾಗಿವೆ; ಆದರೆ ಯೆಹೋವ ದೇವರು ಆಕಾಶಮಂಡಲವನ್ನು ನಿರ್ಮಿಸಿದವರು.</verse>
				<verse number="6">ಘನತೆಯೂ, ಪ್ರಭೆಯೂ ಅವರ ಮುಂದೆ ಇವೆ; ಬಲವೂ, ಸೌಂದರ್ಯವೂ ಅವರ ಪರಿಶುದ್ಧ ಸ್ಥಳದಲ್ಲಿ ಇವೆ.</verse>
				<verse number="7">ಜನಾಂಗದ ಕುಟುಂಬಗಳೇ, ಯೆಹೋವ ದೇವರ ಮುಂದೆ ನೀವು ಮಹಿಮೆಯನ್ನೂ ಬಲವನ್ನೂ ಅರ್ಪಿಸಿರಿ.</verse>
				<verse number="8">ಯೆಹೋವ ದೇವರ ಹೆಸರಿಗೆ ಸಲ್ಲತಕ್ಕ ಗೌರವವನ್ನು ಸಲ್ಲಿಸಿರಿ; ಕಾಣಿಕೆಯನ್ನು ತೆಗೆದುಕೊಂಡು ಅವರ ಅಂಗಳಗಳಿಗೆ ಬನ್ನಿರಿ.</verse>
				<verse number="9">ಪರಿಶುದ್ಧತೆ ಎಂಬ ಭೂಷಣದೊಡನೆ ಯೆಹೋವ ದೇವರನ್ನು ಆರಾಧಿಸಿರಿ; ಸಮಸ್ತ ಭೂನಿವಾಸಿಗಳೇ, ಅವರ ಮುಂದೆ ಭಯಪಡಿರಿ.</verse>
				<verse number="10">“ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಆದ್ದರಿಂದ ಲೋಕವು ಸ್ಥಿರವಾಗಿರುವುದು, ಕದಲುವುದಿಲ್ಲ; ಅವರು ಜನರಿಗೆ ನೀತಿಯಲ್ಲಿ ನ್ಯಾಯತೀರಿಸುತ್ತಾರೆ,” ಎಂದು ಎಲ್ಲಾ ಜನಾಂಗಗಳಲ್ಲಿ ಹೇಳಿರಿ.</verse>
				<verse number="11">ಆಕಾಶವು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ.</verse>
				<verse number="12">ಹೊಲಗಳೂ, ಅವುಗಳಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಆಗ ಅಡವಿಯ ಮರಗಳೆಲ್ಲಾ ಯೆಹೋವ ದೇವರ ಮುಂದೆಯೇ ಉತ್ಸಾಹಧ್ವನಿ ಮಾಡಲಿ.</verse>
				<verse number="13">ಸಮಸ್ತ ಸೃಷ್ಟಿಯು ಯೆಹೋವ ದೇವರ ಸನ್ನಿಧಿಯಲ್ಲಿ ಹಾಡಲಿ, ಏಕೆಂದರೆ ಅವರು ಲೋಕಕ್ಕೆ ನೀತಿಯಿಂದಲೂ; ಜನರಿಗೆ ತಮ್ಮ ಸತ್ಯದಿಂದಲೂ ನ್ಯಾಯತೀರಿಸಲು ಬರುತ್ತಾರೆ.</verse>
			</chapter>
			<chapter number="97">
				<verse number="1">ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋಷಪಡಲಿ.</verse>
				<verse number="2">ಮೇಘಗಳೂ, ಕಾರ್ಗತ್ತಲೂ ಅವರ ಸುತ್ತಲು ಇವೆ; ನೀತಿಯೂ, ನ್ಯಾಯವೂ ಅವರ ಸಿಂಹಾಸನದ ಅಸ್ತಿವಾರವಾಗಿದೆ.</verse>
				<verse number="3">ಬೆಂಕಿಯು ಅವರ ಮುಂದೆ ಹೋಗಿ ಅವರ ವೈರಿಗಳನ್ನು ಸುತ್ತಲೂ ದಹಿಸುವುದು.</verse>
				<verse number="4">ಅವರ ಮಿಂಚುಗಳು ಲೋಕವನ್ನು ಬೆಳಗಿಸುತ್ತವೆ; ಭೂಮಿಯು ಕಂಡು ನಡುಗುತ್ತದೆ.</verse>
				<verse number="5">ಯೆಹೋವ ದೇವರ ಸನ್ನಿಧಿಯಲ್ಲಿ ಬೆಟ್ಟಗಳು ಕರಗುತ್ತವೆ, ಸಮಸ್ತ ಭೂಮಿಯು ಮೇಣದ ಹಾಗೆ ಕರಗುತ್ತವೆ.</verse>
				<verse number="6">ಆಕಾಶವು ಅವರ ನೀತಿಯನ್ನು ತಿಳಿಸುತ್ತದೆ; ಎಲ್ಲಾ ಜನಗಳು ಅವರ ಮಹಿಮೆಯನ್ನು ಕಾಣುತ್ತಾರೆ.</verse>
				<verse number="7">ವಿಗ್ರಹಗಳನ್ನು ಪೂಜಿಸಿ, ವಿಗ್ರಹಗಳಲ್ಲಿ ಹೆಮ್ಮೆ ಪಡುವವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಯೆಹೋವ ದೇವರನ್ನು ಆರಾಧಿಸಿರಿ!</verse>
				<verse number="8">ಯೆಹೋವ ದೇವರೇ, ನಿಮ್ಮ ನ್ಯಾಯಗಳನ್ನು ಚೀಯೋನ್ ಪಟ್ಟಣವು ಕೇಳಿ ಸಂತೋಷಿಸಿತು; ಯೆಹೂದದ ಪುತ್ರಿಯರು ಸಹ ಉಲ್ಲಾಸಿಸುತ್ತಾರೆ.</verse>
				<verse number="9">ಏಕೆಂದರೆ ಯೆಹೋವ ದೇವರೇ, ನೀವು ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ; ಎಲ್ಲಾ ದೇವರುಗಳ ಮೇಲೆ ನೀವು ಅತ್ಯಂತ ಮಹೋನ್ನತರಾಗಿದ್ದೀರಿ.</verse>
				<verse number="10">ಯೆಹೋವ ದೇವರನ್ನು ಪ್ರೀತಿಸುವವರು ಕೆಟ್ಟದ್ದನ್ನು ಹಗೆ ಮಾಡುವರು; ದೇವರು ತಮ್ಮ ಭಕ್ತರ ಪ್ರಾಣಗಳನ್ನು ಕಾಪಾಡಿ, ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವರು.</verse>
				<verse number="11">ನೀತಿವಂತನಿಗೋಸ್ಕರ ಬೆಳಕೂ, ಯಥಾರ್ಥ ಹೃದಯದವರಿಗೋಸ್ಕರ ಅವರ ಹೃದಯದಲ್ಲಿ ಆನಂದವೂ ಇರುವುದು.</verse>
				<verse number="12">ನೀತಿವಂತರೇ, ಯೆಹೋವ ದೇವರಲ್ಲಿ ಸಂತೋಷಿಸಿರಿ; ದೇವರ ಪರಿಶುದ್ಧ ನಾಮವನ್ನು ಕೊಂಡಾಡಿರಿ.</verse>
			</chapter>
			<chapter number="98">
				<verse number="1">ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ; ಏಕೆಂದರೆ ಅವರು ಅದ್ಭುತಗಳನ್ನು ಮಾಡಿದ್ದಾರೆ; ಅವರ ಬಲಗೈಯೂ, ಅವರ ಪರಿಶುದ್ಧ ಭುಜವು ಅವರಿಗೆ ಜಯವನ್ನು ತಂದಿವೆ.</verse>
				<verse number="2">ಯೆಹೋವ ದೇವರು ತಮ್ಮ ರಕ್ಷಣೆಯನ್ನು ತಿಳಿಯಪಡಿಸಿದ್ದಾರೆ; ರಾಷ್ಟ್ರಗಳಿಗೆ ತಮ್ಮ ನೀತಿಯನ್ನು ಪ್ರಕಟಪಡಿಸಿದ್ದಾರೆ.</verse>
				<verse number="3">ಇಸ್ರಾಯೇಲರ ಕಡೆಗೆ ತಮ್ಮ ಪ್ರೀತಿಯನ್ನೂ, ತಮ್ಮ ಸತ್ಯತೆಯನ್ನೂ ಜ್ಞಾಪಕ ಮಾಡಿಕೊಂಡಿದ್ದಾರೆ; ಭೂಮಿಯ ಅಂತ್ಯಗಳಲ್ಲೆವೂ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.</verse>
				<verse number="4">ಸಮಸ್ತ ಭೂನಿವಾಸಿಗಳೇ, ಯೆಹೋವ ದೇವರಿಗೆ ಆನಂದಘೋಷ ಮಾಡಿರಿ. ಉತ್ಸಾಹಧ್ವನಿ ಮಾಡಿ ಸಂಗೀತದಿಂದ ಸ್ತುತಿಹಾಡಿರಿ.</verse>
				<verse number="5">ಯೆಹೋವ ದೇವರಿಗೆ ಕಿನ್ನರಿಯಿಂದ ಗಾನಮಾಡಿರಿ. ಕಿನ್ನರಿಯಿಂದಲೂ, ಕೀರ್ತನೆಯ ಶಬ್ದದಿಂದಲೂ ಹಾಡಿರಿ.</verse>
				<verse number="6">ತುತೂರಿಗಳಿಂದಲೂ, ಹೌದು, ಟಗರಿನ ಕೊಂಬಿನಿಂದಲೂ ಯೆಹೋವ ರಾಜರ ಮುಂದೆ ಆನಂದಘೋಷ ಮಾಡಿರಿ.</verse>
				<verse number="7">ಸಮುದ್ರವೂ, ಅದರಲ್ಲಿರುವುದೆಲ್ಲವೂ, ಲೋಕವೂ, ಅದರ ನಿವಾಸಿಗಳೂ ಪ್ರತಿಧ್ವನಿಸಲಿ.</verse>
				<verse number="8">ನದಿಗಳು ಚಪ್ಪಾಳೆ ತಟ್ಟಲಿ. ಬೆಟ್ಟಗಳು ಒಟ್ಟುಗೂಡಿ ಆನಂದ ಕೀರ್ತನೆ ಹಾಡಲಿ.</verse>
				<verse number="9">ಅವು ಯೆಹೋವ ದೇವರ ಮುಂದೆ ಹಾಡಲಿ, ಏಕೆಂದರೆ ಅವರು ಭೂಮಿಗೆ ನ್ಯಾಯತೀರಿಸಲು ಬರುತ್ತಾರೆ. ಅವರು ಲೋಕಕ್ಕೆ ನೀತಿಗನುಸಾರವಾಗಿಯೂ ಜನರಿಗೆ ನ್ಯಾಯಾನುಸಾರವಾಗಿಯೂ ತೀರ್ಪು ನೀಡುವರು.</verse>
			</chapter>
			<chapter number="99">
				<verse number="1">ಯೆಹೋವ ದೇವರು ಆಳಿಕೆ ಮಾಡುತ್ತಾರೆ. ರಾಷ್ಟ್ರಗಳು ನಡುಗಲಿ. ಅವರು ಕೆರೂಬಿಗಳ ಮಧ್ಯದಲ್ಲಿ ಕೂತಿದ್ದಾರೆ. ಭೂಮಿಯು ಕದಲಲಿ.</verse>
				<verse number="2">ಯೆಹೋವ ದೇವರು ಚೀಯೋನಿನಲ್ಲಿ ಮಹೋನ್ನತರಾಗಿದ್ದಾರೆ. ಎಲ್ಲಾ ಜನಗಳ ಮೇಲೆ ಉನ್ನತರಾಗಿದ್ದಾರೆ.</verse>
				<verse number="3">ನಿಮ್ಮ ಅತಿಶಯವಾದ ಹೆಸರನ್ನು ಜನರು ಕೊಂಡಾಡಲಿ. ದೇವರು ಪರಿಶುದ್ಧರು.</verse>
				<verse number="4">ನ್ಯಾಯ ಪ್ರಿಯ ರಾಜರೇ, ನೀವು ನೀತಿಯನ್ನು ಸ್ಥಿರಪಡಿಸುತ್ತೀರಿ. ನ್ಯಾಯವನ್ನೂ ನೀತಿಯನ್ನೂ ಯಾಕೋಬ್ಯರಲ್ಲಿ ನೀವು ಮನದಟ್ಟಾಗಿಸಿರುವಿರಿ.</verse>
				<verse number="5">ನಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ಅವರ ಪಾದಪೀಠದಲ್ಲಿ ಆರಾಧಿಸಿರಿ. ಏಕೆಂದರೆ ಅವರು ಪರಿಶುದ್ಧರಾಗಿದ್ದಾರೆ.</verse>
				<verse number="6">ಯೆಹೋವ ದೇವರ ಯಾಜಕರಲ್ಲಿ ಮೋಶೆಯೂ ಆರೋನನೂ ಇದ್ದಾರೆ. ದೇವರ ಹೆಸರೆತ್ತಿ ಕರೆದವರಲ್ಲಿ ಸಮುಯೇಲನೂ ಸಹ ಒಬ್ಬನು. ಇವರೆಲ್ಲರೂ ಯೆಹೋವ ದೇವರನ್ನು ಕರೆದರು. ದೇವರು ಅವರಿಗೆ ಉತ್ತರಕೊಟ್ಟರು.</verse>
				<verse number="7">ಮೇಘಸ್ತಂಭದಿಂದ ಅವರ ಸಂಗಡ ಮಾತನಾಡಿದರು. ದೇವರು ಅವರಿಗೆ ಕೊಟ್ಟ ಶಾಸನಗಳನ್ನೂ ತೀರ್ಪುಗಳನ್ನೂ ಅವರು ಕೈಗೊಂಡರು.</verse>
				<verse number="8">ನಮ್ಮ ದೇವರಾದ ಯೆಹೋವ ದೇವರೇ, ನೀವು ಅವರಿಗೆ ಉತ್ತರಕೊಟ್ಟಿದ್ದೀರಿ. ನೀವು ದುಷ್ಕೃತ್ಯಗಳಿಗಾಗಿ ಇಸ್ರಾಯೇಲರನ್ನು ದಂಡಿಸಿದರೂ ಅವರನ್ನು ಕ್ಷಮಿಸುವ ದೇವರಾಗಿದ್ದೀರಿ.</verse>
				<verse number="9">ನಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ದೇವರ ಪರಿಶುದ್ಧ ಪರ್ವತದಲ್ಲಿ ಆರಾಧಿಸಿರಿ. ನಮ್ಮ ದೇವರಾದ ಯೆಹೋವ ದೇವರು ಪರಿಶುದ್ಧರು.</verse>
			</chapter>
			<chapter number="100">
				<verse number="1">ಸಮಸ್ತ ಭೂಮಿಯೇ, ಯೆಹೋವ ದೇವರಿಗೆ ಜಯಧ್ವನಿ ಮಾಡಿರಿ.</verse>
				<verse number="2">ಸಂತೋಷದಿಂದ ಯೆಹೋವ ದೇವರನ್ನು ಆರಾಧಿಸಿರಿ; ಆನಂದದಿಂದ ಹಾಡುತ್ತಾ ಅವರ ಮುಂದೆ ಬನ್ನಿರಿ.</verse>
				<verse number="3">ಯೆಹೋವ ದೇವರೇ ದೇವರೆಂದು ತಿಳುಕೊಳ್ಳಿರಿ; ಅವರೇ ನಮ್ಮನ್ನು ಉಂಟುಮಾಡಿದ್ದಾರೆ; ನಾವು ಅವರ ಜನರೂ, ಅವರು ಮೇಯಿಸುವ ಕುರಿ ಮಂದೆಯೂ ಆಗಿದ್ದೇವೆ.</verse>
				<verse number="4">ಕೃತಜ್ಞತೆಯಿಂದ ಅವರ ಬಾಗಿಲುಗಳಿಗೂ, ಕೃತಜ್ಞತಾ ಸ್ತೋತ್ರದಿಂದ ಅವರ ಅಂಗಳಗಳಿಗೂ ಬನ್ನಿರಿ; ಅವರನ್ನು ಕೊಂಡಾಡಿರಿ, ಅವರ ಹೆಸರನ್ನು ಸ್ತುತಿಸಿರಿ.</verse>
				<verse number="5">ಯೆಹೋವ ದೇವರು ಒಳ್ಳೆಯವರು, ಅವರ ಕರುಣೆಯು ಯುಗಯುಗಕ್ಕೂ ಇರುವುದು. ಅವರ ಸತ್ಯತೆಯು ತಲತಲಾಂತರಕ್ಕೂ ಮುಂದುವರಿಯುವುದು.</verse>
			</chapter>
			<chapter number="101">
				<verse number="1">ನಿಮ್ಮ ಪ್ರೀತಿ ನೀತಿಗಳನ್ನು ಕುರಿತು ಹಾಡುವೆನು; ಯೆಹೋವ ದೇವರೇ, ನಿಮ್ಮನ್ನು ಸ್ತುತಿಸುವೆನು.</verse>
				<verse number="2">ದೋಷರಹಿತ ಮಾರ್ಗದಲ್ಲಿ ನಡೆಯಲು ಜಾಗರೂಕನಾಗಿರುವೆನು; ನೀವು ಯಾವಾಗ ನನ್ನ ಬಳಿಗೆ ಬರುವಿರಿ? ನಾನು ನಿರ್ದೋಷ ಹೃದಯದಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು.</verse>
				<verse number="3">ನಾನು ಕೆಟ್ಟ ಕಾರ್ಯವನ್ನು ನನ್ನ ಕಣ್ಣುಗಳ ಮುಂದೆ ಒಪ್ಪಿಗೆಯಿಂದ ನೋಡುವುದಿಲ್ಲ. ಅವಿಶ್ವಾಸಿಗಳು ಮಾಡುವುದನ್ನು ದ್ವೇಷಿಸುವೆನು; ಅದರಲ್ಲಿ ನಾನು ಭಾಗವಹಿಸುವುದಿಲ್ಲ.</verse>
				<verse number="4">ಮೂರ್ಖಜನರು ನನ್ನಿಂದ ದೂರವಿರುವರು; ದುಷ್ಟತನವನ್ನು ಅರಿಯದಿರುವೆನು.</verse>
				<verse number="5">ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸುಮ್ಮನಿರಿಸುವೆನು; ಗರ್ವದ ಕಣ್ಣೂ, ಅಹಂಕಾರದ ಹೃದಯವೂ ಉಳ್ಳವನನ್ನು ಸಹಿಸಲಾರೆನು.</verse>
				<verse number="6">ದೇಶದಲ್ಲಿರುವ ನಂಬಿಗಸ್ತರನ್ನು ಆರಿಸಿಕೊಳ್ಳುವೆನು; ಅವರೇ ನನ್ನ ಸನ್ನಿಧಿಯಲ್ಲಿ ವಾಸಿಸಬೇಕು; ನಿಷ್ಕಳಂಕವಾಗಿ ನಡೆಯುವವರೇ ನನ್ನ ಸೇವೆಯಲ್ಲಿರಬೇಕು.</verse>
				<verse number="7">ಮೋಸ ಮಾಡುವವನು ನನ್ನ ಮನೆಯೊಳಗೆ ವಾಸಮಾಡನು; ಸುಳ್ಳಾಡುವವನು ನನ್ನ ಕಣ್ಣುಗಳ ಮುಂದೆ ನಿಂತುಕೊಳ್ಳನು.</verse>
				<verse number="8">ದುಷ್ಟತನ ಮಾಡುವವರೆಲ್ಲರನ್ನು ಪ್ರತಿ ಮುಂಜಾನೆ ನಿಲ್ಲಿಸಿಬಿಡುವೆನು; ಯೆಹೋವ ದೇವರ ಪಟ್ಟಣದೊಳಗಿಂದ ಪ್ರತಿಯೊಬ್ಬ ದುಷ್ಟನನ್ನು ಹೊರಗೆ ಹಾಕುವೆನು.</verse>
			</chapter>
			<chapter number="102">
				<verse number="1">ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ; ನನ್ನ ಮೊರೆಯು ನಿಮಗೆ ಮುಟ್ಟಲಿ.</verse>
				<verse number="2">ನನಗೆ ಇಕ್ಕಟ್ಟು ಇರುವ ದಿವಸದಲ್ಲಿ ನಿಮ್ಮ ಮುಖವನ್ನು ನನಗೆ ಮರೆಮಾಡಬೇಡಿರಿ, ಸಹಾಯಮಾಡಿರಿ; ನಾನು ಕರೆಯುವಾಗ ನನ್ನ ಕಡೆಗೆ ತಿರುಗಿರಿ, ಬೇಗನೇ ನನಗೆ ಉತ್ತರಕೊಡಿರಿ.</verse>
				<verse number="3">ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗುತ್ತವೆ; ನನ್ನ ಎಲುಬುಗಳು ಬೂದಿ ಮುಚ್ಚಿದ ಕೆಂಡದಂತೆ ಸುಟ್ಟುಹೋಗಿವೆ.</verse>
				<verse number="4">ನನ್ನ ಹೃದಯವು ಬಾಡಿಹೋಗಿ ಹುಲ್ಲಿನ ಹಾಗೆ ಒಣಗಿಹೋಗಿದೆ; ನಾನು ಊಟಮಾಡುವುದಕ್ಕೆ ಸಹ ಮರೆತುಬಿಡುತ್ತೇನೆ.</verse>
				<verse number="5">ನಾನು ನನ್ನ ನಿಟ್ಟುಸಿರಿನಿಂದ ಮೊರೆಯಿಡುತ್ತಿದ್ದೇನೆ. ನನ್ನಲ್ಲಿ ಎಲುಬು ತೊಗಲು ಮಾತ್ರ ಉಳಿದಿರುತ್ತವೆ.</verse>
				<verse number="6">ನಾನು ಅರಣ್ಯದ ಗೂಬೆಗೆ ಸಮಾನನಾಗಿದ್ದೇನೆ; ನಾನು ಹಾಳೂರಿನ ಗೂಬೆಯ ಹಾಗಿದ್ದೇನೆ.</verse>
				<verse number="7">ನಿದ್ರೆಯಿಲ್ಲದೆ ಬಳಲುತ್ತಿದ್ದೇನೆ; ಮಾಳಿಗೆಯ ಮೇಲಿರುವ ಒಂಟಿಯಾದ ಪಕ್ಷಿಯ ಹಾಗಿದ್ದೇನೆ.</verse>
				<verse number="8">ದಿನವೆಲ್ಲಾ ನನ್ನ ಶತ್ರುಗಳು ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಿಸಿಕೊಳ್ಳುವವರೆಲ್ಲರು ನನಗೆ ವಿರೋಧವಾಗಿ ಶಪಿಸುತ್ತಾರೆ.</verse>
				<verse number="9">ನಿಮ್ಮ ದುಃಖ ಬೇಸರದ ನಿಮಿತ್ತ, ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿದ್ದೇನೆ.</verse>
				<verse number="10">ಇದಕ್ಕೆ ಕಾರಣ ನೀವು ಗಮನ ಕೊಡದಿರುವುದೇ. ನೀವು ನನಗೆ ಲಕ್ಷ್ಯಕೊಡುತ್ತಾಯಿಲ್ಲ.</verse>
				<verse number="11">ನನ್ನ ದಿವಸಗಳು ಸಾಯಂಕಾಲದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತಿದ್ದೇನೆ.</verse>
				<verse number="12">ಆದರೆ ನೀವು ಯೆಹೋವ ದೇವರೇ, ಎಂದೆಂದಿಗೂ ಇರುತ್ತೀರಿ; ನಿಮ್ಮ ಪ್ರಸಿದ್ಧ ಕಾರ್ಯಗಳು ತಲತಲಾಂತರಕ್ಕೂ ಇರುತ್ತವೆ.</verse>
				<verse number="13">ನೀವು ಎದ್ದು ಚೀಯೋನನ್ನು ಕನಿಕರಿಸುವಿರಿ; ಅದನ್ನು ಕರುಣಿಸುವ ಕಾಲ ಇದೇ; ಹೌದು, ನೀವು ನಿರ್ಣಯಿಸಿದ ಸಮಯವು ಬಂದಿದೆ.</verse>
				<verse number="14">ಅದು ಕಲ್ಲು ಕುಪ್ಪೆಯಾಗಿ ಹೋಗಿದ್ದರೂ, ನಿಮ್ಮ ಸೇವಕರಿಗೆ ಅತಿ ಪ್ರಿಯವಾಗಿದೆ; ಅದರ ಧೂಳಿಗೆ ಅವರು ಮರಗುತ್ತಾರೆ.</verse>
				<verse number="15">ಜನಾಂಗಗಳು ಯೆಹೋವ ದೇವರ ಹೆಸರಿಗೂ, ಭೂರಾಜರೆಲ್ಲರೂ ನಿಮ್ಮ ಮಹಿಮೆಗೂ ಭಯಪಡುವರು.</verse>
				<verse number="16">ಏಕೆಂದರೆ ಯೆಹೋವ ದೇವರು ಚೀಯೋನನ್ನು ಮರಳಿ ಕಟ್ಟುವರು; ಅವರು ತಮ್ಮ ಮಹಿಮೆಯಲ್ಲಿ ಕಾಣಿಸಿಕೊಳ್ಳುವರು.</verse>
				<verse number="17">ಅವರು ದಿಕ್ಕಿಲ್ಲದವರ ಪ್ರಾರ್ಥನೆಗೆ ಕಿವಿಗೊಡುತ್ತಾರೆ; ದೇವರು ಅವರ ಪ್ರಾರ್ಥನೆಯನ್ನು ತಿರಸ್ಕರಿಸುವುದಿಲ್ಲ.</verse>
				<verse number="18">ಇದು ಮುಂದಿನ ಸಂತತಿಗೋಸ್ಕರ ಲಿಖಿತವಾಗಿರಲಿ; ಹುಟ್ಟಲಿಕ್ಕಿರುವ ಜನರು ಯೆಹೋವ ದೇವರನ್ನು ಸ್ತುತಿಸಲಿ.</verse>
				<verse number="19">ಯೆಹೋವ ದೇವರು ಉನ್ನತವಾದ ಪವಿತ್ರ ಸ್ಥಾನದಿಂದ ಕೆಳಕ್ಕೆ ನೋಡಿದ್ದಾರೆ; ಅವರು ಪರಲೋಕದಿಂದ ಭೂಮಿಯನ್ನು ದೃಷ್ಟಿಸಿದ್ದಾರೆ.</verse>
				<verse number="20">ಅವರು ಸೆರೆಯವರ ಗೋಳಾಟವನ್ನು ಕೇಳಿ, ಮರಣದಂಡನೆಗೆ ಪಾತ್ರನಾದವರನ್ನು ಬಿಡಿಸುವರು,</verse>
				<verse number="21">ಬಿಡುಗಡೆಯಾದವರು ಚೀಯೋನಿನಲ್ಲಿ ಯೆಹೋವ ದೇವರ ನಾಮವನ್ನು ಸಾರುವಂತೆಯೂ, ಯೆರೂಸಲೇಮಿನಲ್ಲಿ ತಮ್ಮ ಸ್ತೋತ್ರವನ್ನು ಪ್ರಕಟಿಸುವಂತೆಯೂ ಮಾಡಿದ್ದಾರೆ.</verse>
				<verse number="22">ಜನಾಂಗಗಳೂ, ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವ ದೇವರನ್ನು ಸೇವಿಸುತ್ತವೆ, ಎಂದು ಹೇಳಲಾಗುವುದು.</verse>
				<verse number="23">ದೇವರು ನನ್ನ ಜೀವಮಾನದ ಬಲವನ್ನು ಕುಂದಿಸಿದ್ದಾರೆ, ನನ್ನ ದಿನಗಳನ್ನೂ ಕಡಿಮೆ ಮಾಡಿದ್ದಾರೆ.</verse>
				<verse number="24">ಆದ್ದರಿಂದ ನಾನು, “ನನ್ನ ದೇವರೇ, ನನ್ನ ಆಯುಷ್ಯದ ಮಧ್ಯದಲ್ಲಿ ನನ್ನನ್ನು ತೆಗೆದುಕೊಳ್ಳಬೇಡಿರಿ; ನಿಮ್ಮ ವರ್ಷಗಳು ತಲತಲಾಂತರಗಳಿಗೂ ಇವೆ.</verse>
				<verse number="25">ಆದಿಯಲ್ಲಿ ನೀವು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀರಿ; ಆಕಾಶಗಳು ನಿಮ್ಮ ಕೈಕೆಲಸಗಳಾಗಿವೆ.</verse>
				<verse number="26">ಅವು ನಾಶವಾಗುವುವು; ಆದರೆ ನೀವು ಸದಾಕಾಲವೂ ಜೀವಿಸುತ್ತೀರಿ. ಅವುಗಳೆಲ್ಲಾ ವಸ್ತ್ರದ ಹಾಗೆ ಹಳೆಯದಾಗುವುದು; ಅಂಗಿಯ ಹಾಗೆ ಅವುಗಳನ್ನು ಬದಲಾಯಿಸುವಿರಿ; ಅವು ತೆಗೆದುಹಾಕಲಾಗುವುದು.</verse>
				<verse number="27">ಆದರೆ ನೀವು ಏಕರೀತಿಯಾಗಿದ್ದೀರಿ. ನಿಮ್ಮ ವರ್ಷಗಳು ಮುಗಿದುಹೋಗುವುದಿಲ್ಲ.</verse>
				<verse number="28">ನಿಮ್ಮ ಸೇವಕರ ಮಕ್ಕಳು ನಿಮ್ಮ ಸನ್ನಿಧಿಯಲ್ಲಿ ಬದುಕುವರು; ಅವರ ಸಂತತಿಯು ನಿಮ್ಮ ಮುಂದೆ ನೆಲೆಯಾಗಿರುವುದು.”</verse>
			</chapter>
			<chapter number="103">
				<verse number="1">ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು; ನನ್ನ ಅಂತರಾತ್ಮವೇ ಅವರ ಪರಿಶುದ್ಧ ನಾಮವನ್ನು ಸ್ತುತಿಸು.</verse>
				<verse number="2">ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು; ಅವರ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.</verse>
				<verse number="3">ದೇವರು ನಿಮ್ಮ ಪಾಪಗಳನ್ನೆಲ್ಲಾ ಕ್ಷಮಿಸುತ್ತಾರೆ. ನಿಮ್ಮ ರೋಗಗಳನ್ನೆಲ್ಲಾ ವಾಸಿಮಾಡುತ್ತಾರೆ.</verse>
				<verse number="4">ದೇವರು ನಿಮ್ಮ ಜೀವವನ್ನು ಪಾತಾಳದಿಂದ ವಿಮೋಚಿಸುವರು; ಪ್ರೀತಿ ಅನುಕಂಪವನ್ನು ನಿನಗೆ ಕಿರೀಟವಾಗಿ ಶೃಂಗರಿಸುವರು.</verse>
				<verse number="5">ನಿಮ್ಮ ಯೌವನವು ಹದ್ದಿನ ಹಾಗೆ ನವೀಕರಿಸುವಂತೆ ಮಾಡುವರು. ಅವರು ನಿಮ್ಮ ಆಶೆಗಳನ್ನು ಒಳ್ಳೆಯವುಗಳಿಂದ ತೃಪ್ತಿಪಡಿಸುವರು.</verse>
				<verse number="6">ಯೆಹೋವ ದೇವರು ಕುಗ್ಗಿದವರೆಲ್ಲರಿಗೂ ನೀತಿಯನ್ನೂ, ನ್ಯಾಯವನ್ನೂ ಕಾರ್ಯರೂಪಕ್ಕೆ ತರುವರು.</verse>
				<verse number="7">ಅವರು ತಮ್ಮ ಮಾರ್ಗಗಳನ್ನು ಮೋಶೆಗೂ, ತಮ್ಮ ಕ್ರಿಯೆಗಳನ್ನು ಇಸ್ರಾಯೇಲರಿಗೂ ಪ್ರಕಟಿಸಿದರು:</verse>
				<verse number="8">ಯೆಹೋವ ದೇವರು, ಅನುಕಂಪವೂ ದಯೆಯೂ ದೀರ್ಘಶಾಂತಿಯೂ ಪೂರ್ಣ ಪ್ರೀತಿಯೂ ಉಳ್ಳವರಾಗಿದ್ದಾರೆ.</verse>
				<verse number="9">ಅವರು ಯಾವಾಗಲೂ ತಪ್ಪುಹುಡುಕುವವರಲ್ಲ; ದೇವರು ತಮ್ಮ ಕೋಪವನ್ನು ಎಂದೆಂದಿಗೂ ಕೂಡಿಟ್ಟುಕೊಳ್ಳುವವರು ಅಲ್ಲ;</verse>
				<verse number="10">ದೇವರು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; ನಮ್ಮ ಅಧರ್ಮಗಳ ಪ್ರಕಾರ ನಮಗೆ ಮುಯ್ಯಿತೀರಿಸಲಿಲ್ಲ.</verse>
				<verse number="11">ಏಕೆಂದರೆ, ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ದೇವರ ಪ್ರೀತಿಯು ತಮಗೆ ಭಯಪಡುವವರ ಮೇಲೆ ಅಷ್ಟು ಮಹೋನ್ನತವಾಗಿದೆ;</verse>
				<verse number="12">ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ, ಅವರು ನಮ್ಮ ಅತಿಕ್ರಮಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾರೆ.</verse>
				<verse number="13">ಒಬ್ಬ ತಂದೆಯು ತಮ್ಮ ಮಕ್ಕಳ ಮೇಲೆ ಅನುಕಂಪಗೊಳ್ಳುವಂತೆ, ಯೆಹೋವ ದೇವರು ತಮಗೆ ಭಯಪಡುವವರ ಮೇಲೆ ಅನುಕಂಪ ತೋರಿಸುವವರಾಗಿದ್ದಾರೆ.</verse>
				<verse number="14">ದೇವರು ನಮ್ಮ ಪ್ರಕೃತಿಯನ್ನು ಬಲ್ಲವರಾಗಿದ್ದಾರೆ; ನಾವು ಧೂಳಾಗಿದ್ದೇವೆಂದು ಅವರು ನೆನಪುಮಾಡಿ ಕೊಳ್ಳುತ್ತಾರೆ.</verse>
				<verse number="15">ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ, ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ;</verse>
				<verse number="16">ಗಾಳಿಯು ಅದರ ಮೇಲೆ ಬೀಸುತ್ತಲೇ ಹೂವು ಇಲ್ಲದೆ ಹೋಗುತ್ತದೆ; ಅದು ಇದ್ದ ಸ್ಥಳವನ್ನು ಪುನಃ ಕಾಣುವುದಿಲ್ಲ.</verse>
				<verse number="17">ಆದರೆ ಯೆಹೋವ ದೇವರ ಪ್ರೀತಿಯು ಅವರಿಗೆ ಭಯಪಡುವವರ ಮೇಲೆ ಯುಗಯುಗಾಂತರಕ್ಕೂ ಇರುವುದು, ಅವರ ನೀತಿಯು ಮಕ್ಕಳ ಮಕ್ಕಳಿಗೂ ನೆಲೆಸಿರುವುದು.</verse>
				<verse number="18">ದೇವರ ಒಡಂಬಡಿಕೆಯನ್ನು ಕೈಕೊಂಡು, ಅವರ ಸೂತ್ರಗಳನ್ನು ಪಾಲಿಸಲು ನೆನಸುವವರಿಗೂ ಅವರ ನೀತಿಯು ನೆಲೆಸಿರುವುದು.</verse>
				<verse number="19">ಯೆಹೋವ ದೇವರು ಪರಲೋಕದಲ್ಲಿ ತಮ್ಮ ಸಿಂಹಾಸನವನ್ನು ಸ್ಥಾಪಿಸಿದ್ದಾರೆ, ಅವರ ಸಾಮ್ರಾಜ್ಯದ ಆಳಿಕೆಯು ಎಲ್ಲರ ಮೇಲೆ ಇರುವುದು.</verse>
				<verse number="20">ದೇವರ ದೂತರೇ, ಅವರ ಮಾತನ್ನು ಕೇಳಿ, ಅವರಿಗೆ ವಿಧೇಯರಾಗುವ ಪರಾಕ್ರಮಿಗಳೇ, ಯೆಹೋವ ದೇವರನ್ನು ಸ್ತುತಿಸಿರಿ.</verse>
				<verse number="21">ದೇವರ ಇಷ್ಟವನ್ನು ನಡೆಸುವ ಸೇವಕರೇ, ಅವರ ಎಲ್ಲಾ ಸೈನ್ಯಗಳೇ, ಯೆಹೋವ ದೇವರನ್ನು ಸ್ತುತಿಸಿರಿ.</verse>
				<verse number="22">ದೇವರ ಆಳಿಕೆಯ ಎಲ್ಲಾ ಕಡೆಗಳಲ್ಲಿಯೂ ಇರುವುದು. ಅವರ ಎಲ್ಲಾ ಸೃಷ್ಟಿಗಳೇ, ಯೆಹೋವ ದೇವರನ್ನು ಸ್ತುತಿಸಿರಿ. ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು.</verse>
			</chapter>
			<chapter number="104">
				<verse number="1">ನನ್ನ ಮನವೇ, ಯೆಹೋವ ದೇವರನ್ನು ಸ್ತುತಿಸು. ನನ್ನ ದೇವರಾದ ಯೆಹೋವ ದೇವರೇ, ನೀವು ಬಹಳ ದೊಡ್ಡವರಾಗಿದ್ದೀರಿ; ಘನತೆಯಿಂದಲೂ, ಪ್ರಭಾವದಿಂದಲೂ ಭೂಷಿತನಾಗಿರುವೆ.</verse>
				<verse number="2">ದೇವರು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುತ್ತಾರೆ, ಆಕಾಶವನ್ನು ಗುಡಾರದ ಹಾಗೆ ಹರಡಿಸಿದ್ದಾರೆ.</verse>
				<verse number="3">ದೇವರು ನೀರಿನ ಮೇಲೆ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾರೆ. ಮೋಡಗಳನ್ನು ತಮ್ಮ ರಥವಾಗಿ ಮಾಡುತ್ತಾರೆ. ಗಾಳಿಯ ರೆಕ್ಕೆಗಳ ಮೇಲೆ ಸವಾರಿ ಮಾಡುತ್ತಾರೆ.</verse>
				<verse number="4">ಅವರು ಗಾಳಿಗಳನ್ನು ತಮ್ಮ ದೂತರಾಗಿ ಮಾಡಿದ್ದಾರೆ, ಅಗ್ನಿ ಜ್ವಾಲೆಯನ್ನು ತಮ್ಮ ಸೇವಕರಾಗಿಯೂ ಮಾಡಿಕೊಂಡಿದ್ದಾರೆ.</verse>
				<verse number="5">ಯುಗಯುಗಾಂತರಗಳಿಗೂ ಅದು ಕದಲದ ಹಾಗೆ, ದೇವರು ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಸ್ಥಾಪಿಸಿದ್ದಾರೆ.</verse>
				<verse number="6">ಜಲಗಾಧವು ವಸ್ತ್ರದ ಹಾಗೆ ಅದನ್ನು ಮುಚ್ಚಿದೆ; ಬೆಟ್ಟಗಳ ಮೇಲೆ ಜಲರಾಶಿಗಳು ನಿಂತವು.</verse>
				<verse number="7">ನಿಮ್ಮ ಗದರಿಕೆಯಿಂದ ಜಲರಾಶಿ ಓಡಿ ಹೋದವು; ನಿಮ್ಮ ಗುಡುಗಿನ ಶಬ್ದದಿಂದ ಅವು ಓಡಿ ಹೋದವು.</verse>
				<verse number="8">ಜಲರಾಶಿಗಳು ಬೆಟ್ಟಗಳಿಗೆ ಏರಿ, ತಗ್ಗುಗಳಿಗೆ ಇಳಿದು, ನೀವು ಅವುಗಳಿಗೆ ಸ್ಥಾಪಿಸಿದ ಸ್ಥಳಕ್ಕೆ ಹೋದವು.</verse>
				<verse number="9">ಅವು ದಾಟದ ಹಾಗೆಯೂ, ಭೂಮಿಯನ್ನು ಮುಚ್ಚುವುದಕ್ಕೆ ತಿರುಗಿ ಬಾರದ ಹಾಗೆಯೂ ನೀವು ಮೇರೆಯನ್ನು ಇಟ್ಟಿದ್ದೀರಿ.</verse>
				<verse number="10">ಬುಗ್ಗೆಗಳನ್ನು ಹಳ್ಳಗಳಿಗೆ ಕಳುಹಿಸುತ್ತೀರಿ. ಅವು ಬೆಟ್ಟಗಳ ನಡುವೆ ಹರಿಯುತ್ತವೆ.</verse>
				<verse number="11">ಅವು ಕಾಡಿನ ಮೃಗಗಳಿಗೆಲ್ಲಾ ನೀರು ಕುಡಿಸುತ್ತವೆ; ಕಾಡುಕತ್ತೆಗಳು ತಮ್ಮ ದಾಹವನ್ನು ತೀರಿಸಿಕೊಳ್ಳುತ್ತವೆ.</verse>
				<verse number="12">ಆಕಾಶದ ಪಕ್ಷಿಗಳು, ಅವುಗಳ ಹತ್ತಿರ ವಾಸವಾಗಿದ್ದು, ಕೊಂಬೆಗಳ ಮಧ್ಯದಲ್ಲಿಂದ ಹಾಡುತ್ತವೆ.</verse>
				<verse number="13">ದೇವರು ಬೆಟ್ಟಗಳಿಗೆ ತಮ್ಮ ಉಪ್ಪರಿಗೆಗಳೊಳಗಿಂದ ನೀರು ಹಾಕುತ್ತಾರೆ. ಅವರ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ.</verse>
				<verse number="14">ದೇವರು ಪಶುಗಳಿಗೋಸ್ಕರ ಹುಲ್ಲನ್ನೂ, ಮನುಷ್ಯನ ವ್ಯವಸಾಯಕ್ಕೋಸ್ಕರ ಪಲ್ಯಗಳನ್ನೂ ಮೊಳೆಸುತ್ತಾರೆ. ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾರೆ.</verse>
				<verse number="15">ದ್ರಾಕ್ಷಾರಸವು ಮನುಷ್ಯ ಹೃದಯವನ್ನು ಸಂತೋಷಪಡಿಸುತ್ತದೆ; ಎಣ್ಣೆಯು ಮಾನವನ ಮುಖವನ್ನು ಪ್ರಕಾಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಪ್ರಾಣಕ್ಕೆ ಆಧಾರವಾಗುತ್ತದೆ.</verse>
				<verse number="16">ಯೆಹೋವ ದೇವರು ನೆಟ್ಟ ಮರಗಳಾದ ಲೆಬನೋನಿನ ದೇವದಾರು ವೃಕ್ಷಗಳಿಗೆ ಬೇಕಾದಷ್ಟು ಜಲವಿರುತ್ತದೆ.</verse>
				<verse number="17">ಅಲ್ಲಿ ಹಕ್ಕಿಗಳು ಗೂಡು ಕಟ್ಟುತ್ತವೆ; ತುರಾಯಿ ಗಿಡಗಳಲ್ಲಿ ಬಕಪಕ್ಷಿಗಳು ವಾಸಿಸುತ್ತವೆ.</verse>
				<verse number="18">ಎತ್ತರವಾದ ಬೆಟ್ಟಗಳು ಕಾಡುಮೇಕೆಗಳಿಗೆ, ಬೆಟ್ಟದ ಮೊಲಗಳಿಗೆ ಬಂಡೆಗಳು ಆಶ್ರಯವಾಗಿವೆ.</verse>
				<verse number="19">ದೇವರೇ, ಕಾಲಗಳ ಸೂಚನೆಗಾಗಿ ಚಂದ್ರನನ್ನು ಸೃಷ್ಟಿಸಿದ್ದೀರಿ, ಸೂರ್ಯನು ತನ್ನ ಅಸ್ತಮಾನವನ್ನು ತಿಳಿದಿದ್ದಾನೆ.</verse>
				<verse number="20">ನೀವು ಕತ್ತಲನ್ನು ಬರಮಾಡುತ್ತೀರಿ, ಆಗ ರಾತ್ರಿಯಾಗುತ್ತದೆ; ಅದರಲ್ಲಿ ಅಡವಿಯ ಮೃಗಗಳೆಲ್ಲಾ ಸಂಚರಿಸುತ್ತವೆ.</verse>
				<verse number="21">ಸಿಂಹದ ಮರಿಗಳು ಬೇಟೆಗೋಸ್ಕರವೂ, ದೇವರಿಂದ ತಮ್ಮ ಆಹಾರವನ್ನು ಹುಡುಕುವುದಕ್ಕೋಸ್ಕರವೂ ಗರ್ಜಿಸುತ್ತವೆ.</verse>
				<verse number="22">ಸೂರ್ಯೋದಯವಾಗಲು ಅವು ಕೂಡಿಬಂದು ತಮ್ಮ ಗವಿಗಳಲ್ಲಿ ಮಲಗಿಕೊಳ್ಳುತ್ತವೆ.</verse>
				<verse number="23">ಮನುಷ್ಯನು ತನ್ನ ಕೆಲಸಕ್ಕೆ ಹೊರಟುಹೋಗಿ ಸಾಯಂಕಾಲದವರೆಗೆ ದುಡಿಯುತ್ತಾನೆ.</verse>
				<verse number="24">ಯೆಹೋವ ದೇವರೇ, ನಿಮ್ಮ ಕೆಲಸಗಳು ಎಷ್ಟೋ ಇವೆ! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟುಮಾಡಿದ್ದೀರಿ, ಭೂಮಿಯು ನಿಮ್ಮ ಸಂಪತ್ತಿನಿಂದ ತುಂಬಿದೆ.</verse>
				<verse number="25">ದೊಡ್ಡದೂ, ವಿಶಾಲವಾದದ್ದೂ ಆದ ಸಮುದ್ರವಿದೆ; ಅದರಲ್ಲಿ ಲೆಕ್ಕವಿಲ್ಲದಷ್ಟು ಜೀವಜಂತುಗಳೂ, ಸಣ್ಣ ದೊಡ್ಡ ಜಲಚರಗಳೂ ಇವೆ.</verse>
				<verse number="26">ಅದರಲ್ಲಿ ಹಡಗುಗಳು ಹೋಗುತ್ತವೆ; ಅದರಲ್ಲಿ ಆಡುವುದಕ್ಕೆ ನೀವು ರೂಪಿಸಿದ ಲಿವ್ಯಾತಾನ ತಿಮಿಂಗಲವು ಇದೆ.</verse>
				<verse number="27">ದೇವರೇ, ನೀವು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವ ಹಾಗೆ, ಅವುಗಳೆಲ್ಲಾ ನಿಮ್ಮನ್ನು ಕಾದುಕೊಂಡಿರುತ್ತವೆ.</verse>
				<verse number="28">ನೀವು ಅವುಗಳಿಗೆ ಕೊಡಲು ಅವು ಕೂಡಿ ಬರುತ್ತವೆ; ನೀವು ನಿಮ್ಮ ಕೈ ತೆರೆಯಲು, ಒಳ್ಳೆಯವುಗಳಿಂದ ತೃಪ್ತಿ ಹೊಂದುತ್ತವೆ.</verse>
				<verse number="29">ನೀವು ನಿಮ್ಮ ಮುಖವನ್ನು ಮರೆಮಾಡಲು, ಅವು ಹೆದರುತ್ತವೆ. ನೀವು ಅವುಗಳ ಶ್ವಾಸವನ್ನು ತೆಗೆದುಬಿಡಲು, ಸತ್ತು ಹೋಗಿ, ಮಣ್ಣುಪಾಲಾಗುತ್ತವೆ.</verse>
				<verse number="30">ನೀವು ನಿಮ್ಮ ಶ್ವಾಸವನ್ನು ಕಳುಹಿಸಲು, ಜೀವಜಂತುಗಳು ಹುಟ್ಟುತ್ತವೆ; ಹೀಗೆ ನೀವು ಭೂಮಿಯನ್ನು ನೂತನಗೊಳಿಸುತ್ತೀರಿ.</verse>
				<verse number="31">ಯೆಹೋವ ದೇವರ ಮಹಿಮೆಯು ಯುಗಯುಗಕ್ಕೂ ಇರಲಿ; ಯೆಹೋವ ದೇವರು ತಮ್ಮ ಕೆಲಸಗಳಲ್ಲಿ ಸಂತೋಷಪಡಲಿ.</verse>
				<verse number="32">ಅವರು ಭೂಮಿಯನ್ನು ದೃಷ್ಟಿಸಲು, ಅದು ನಡುಗುತ್ತದೆ; ಬೆಟ್ಟಗಳನ್ನು ಮುಟ್ಟಲು, ಅವು ಹೊಗೆ ಹಾಯುತ್ತವೆ.</verse>
				<verse number="33">ನಾನು ಜೀವಿತ ಕಾಲವೆಲ್ಲಾ ಯೆಹೋವ ದೇವರಿಗೆ ಹಾಡುತ್ತಿರುವೆನು. ನಾನು ಬದುಕಿರುವವರೆಗೆ ದೇವರನ್ನು ಸ್ತುತಿಸುತ್ತಿರುವೆನು.</verse>
				<verse number="34">ದೇವರ ವಿಷಯವಾದ ನನ್ನ ಧ್ಯಾನವು ಮಧುರವಾಗಿರುವುದು; ನಾನು ಯೆಹೋವ ದೇವರಲ್ಲಿ ಸಂತೋಷ ಪಡುವೆನು.</verse>
				<verse number="35">ಪಾಪಿಗಳು ಭೂಮಿಯೊಳಗಿಂದ ಮುಗಿದು ಹೋಗಲಿ; ದುಷ್ಟರು ಇಲ್ಲದೆ ಹೋಗಲಿ. ನನ್ನ ಮನವೇ, ಯೆಹೋವ ದೇವರನ್ನು ಸ್ತುತಿಸು. ಯೆಹೋವ ದೇವರಿಗೆ ಸ್ತೋತ್ರವಾಗಲಿ.</verse>
			</chapter>
			<chapter number="105">
				<verse number="1">ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ, ಅವರ ಹೆಸರನ್ನು ಸಾರಿ ಹೇಳಿರಿ; ಜನರಲ್ಲಿ ದೇವರ ಕ್ರಿಯೆಗಳನ್ನು ತಿಳಿಯಪಡಿಸಿರಿ.</verse>
				<verse number="2">ದೇವರಿಗೆ ಹಾಡಿರಿ, ದೇವರಿಗೆ ಕೀರ್ತನೆ ಹಾಡಿರಿ; ದೇವರ ಅದ್ಭುತ ಕ್ರಿಯೆಗಳ ವಿಷಯವಾಗಿ ಮಾತನಾಡಿರಿ.</verse>
				<verse number="3">ದೇವರ ಪರಿಶುದ್ಧ ನಾಮವನ್ನು ಹೊಗಳಿರಿ; ಯೆಹೋವ ದೇವರನ್ನು ಹುಡುಕುವವರ ಹೃದಯವು ಸಂತೋಷಿಸಲಿ.</verse>
				<verse number="4">ಯೆಹೋವ ದೇವರನ್ನೂ, ಅವರ ಬಲವನ್ನೂ ಆಶ್ರಯಿಸಿರಿ, ಅವರ ಮುಖವನ್ನು ಯಾವಾಗಲೂ ಹುಡುಕಿರಿ.</verse>
				<verse number="5">ದೇವರು ಮಾಡಿದ ಆಶ್ಚರ್ಯಕಾರ್ಯಗಳನ್ನೂ, ಅವರ ಅದ್ಭುತಗಳನ್ನೂ, ಅವರ ಬಾಯಿಂದ ಹೊರಟ ನ್ಯಾಯ ನಿರ್ಣಯಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.</verse>
				<verse number="6">ದೇವರ ಸೇವಕನಾದ ಅಬ್ರಹಾಮನ ಸಂತತಿಯೇ, ಅವರು ಆಯ್ದುಕೊಂಡ ಯಾಕೋಬನ ಮಕ್ಕಳೇ,</verse>
				<verse number="7">ಅವರೇ ನಮ್ಮ ದೇವರಾದ ಯೆಹೋವ ಆಗಿದ್ದಾರೆ. ಅವರ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಇವೆ.</verse>
				<verse number="8">ದೇವರು ತಮ್ಮ ಒಡಂಬಡಿಕೆಯನ್ನೂ, ಸಾವಿರ ತಲಾಂತರಗಳಿಗೆ ಆಜ್ಞಾಪಿಸಿದ ತಮ್ಮ ಮಾತನ್ನೂ,</verse>
				<verse number="9">ಅಬ್ರಹಾಮನ ಸಂಗಡ ಮಾಡಿದ ಒಡಂಬಡಿಕೆಯನ್ನೂ, ಇಸಾಕನಿಗೆ ಇಟ್ಟ ಆಣೆಯನ್ನೂ ಯುಗಯುಗಕ್ಕೂ ಜ್ಞಾಪಕ ಮಾಡಿಕೊಂಡಿದ್ದಾರೆ.</verse>
				<verse number="10">ದೇವರು ಅದನ್ನು ಯಾಕೋಬನಿಗೆ ತೀರ್ಪನ್ನಾಗಿ ದೃಢಪಡಿಸಿದರು; ಅವರು ಇಸ್ರಾಯೇಲರಿಗೆ ನಿತ್ಯ ಒಡಂಬಡಿಕೆಯಾಗಿ ಸ್ಥಾಪಿಸಿ ಹೇಳಿದ್ದೇನೆಂದರೆ:</verse>
				<verse number="11">“ನಾನು ನಿಮಗೆ ಕಾನಾನ್ ದೇಶವನ್ನು ನಿಮ್ಮ ಬಾಧ್ಯತೆಯ ಪಾಲಾಗಿ ಕೊಡುವೆನು.”</verse>
				<verse number="12">ಆಗ ಅವರು ಅಲ್ಪಸಂಖ್ಯಾತರೂ, ಬಹು ಸ್ವಲ್ಪ ಮಂದಿಯಾಗಿಯೂ, ಪರದೇಶಸ್ಥರಾಗಿಯೂ ನಾಡಿನಲ್ಲಿ ಇದ್ದರು.</verse>
				<verse number="13">ಅವರು ಜನಾಂಗದಿಂದ ಜನಾಂಗಕ್ಕೂ ಒಂದು ರಾಜ್ಯದಿಂದ ಬೇರೊಂದು ರಾಜ್ಯಕ್ಕೂ ಹೋಗುತ್ತಿದ್ದರು.</verse>
				<verse number="14">ಜನರು ಅವರಿಗೆ ಕೇಡು ಮಾಡದಂತೆ ದೇವರು ತಡೆದರು. ಹೌದು, ಅವರಿಗೋಸ್ಕರ ದೇವರು ಅರಸರನ್ನು ಗದರಿಸಿ ಹೀಗೆ ಹೇಳಿದರು:</verse>
				<verse number="15">“ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.”</verse>
				<verse number="16">ದೇವರು ಕ್ಷಾಮವನ್ನು ದೇಶದಲ್ಲಿ ಅನುಮತಿಸಿದರು. ಆಹಾರದ ಒದಗುವಿಕೆಯನ್ನು ಸ್ವಲ್ಪಕಾಲ ನಿಲ್ಲಿಸಿದ್ದರು.</verse>
				<verse number="17">ಆಗ ದೇವರು ಅವರ ಮುಂದೆ ಒಬ್ಬ ಮನುಷ್ಯನನ್ನು ಕಳುಹಿಸಿದರು. ಅವನೇ ದಾಸನಾಗಿ ಮಾರಲಾದ ಯೋಸೇಫನು.</verse>
				<verse number="18">ಸಂಕೋಲೆಗಳಿಂದ ಅವನ ಕಾಲನ್ನು ನೋಯಿಸಿದರು; ಅವನನ್ನು ಕಬ್ಬಿಣದ ಬೇಡಿಗಳಲ್ಲಿ ಇರಿಸಿದರು.</verse>
				<verse number="19">ಯೆಹೋವ ದೇವರ ಮುಂತಿಳಿಸಿದ ವಾಕ್ಯವು ನೆರವೇರುವವರೆಗೆ ಅವನು ದೇವರ ಮಾತಿನಿಂದ ಪರಿಶೋಧಿತನಾದನು.</verse>
				<verse number="20">ಅರಸನು ಅವನನ್ನು ಕರೆದು ಸೆರೆಯಿಂದ ಬಿಡಿಸಿದನು. ಹೌದು, ಜನಗಳ ಅಧಿಪತಿಯಿಂದ ಅವನು ಬಿಡುಗಡೆಯಾದನು.</verse>
				<verse number="21">ಅರಸನು ಅವನನ್ನು ತನ್ನ ಮನೆಗೆ ಯಜಮಾನನಾಗಿಯೂ, ತನ್ನ ಎಲ್ಲಾ ಆಸ್ತಿಯ ಮೇಲೆ ಅಧಿಪತಿಯಾಗಿಯೂ,</verse>
				<verse number="22">ತನ್ನ ಪ್ರಧಾನರಿಗೆ ತನ್ನ ಇಷ್ಟ ಪ್ರಕಾರ ಶಿಕ್ಷಣ ಕೊಡುವುದಕ್ಕೂ, ತನ್ನ ಜ್ಞಾನವನ್ನು ಮಂತ್ರಿಗಳಿಗೆ ಬೋಧಿಸುವುದಕ್ಕೂ ಯೋಸೇಫನನ್ನು ನೇಮಿಸಿದನು.</verse>
				<verse number="23">ಅನಂತರ ಇಸ್ರಾಯೇಲನು ಈಜಿಪ್ಟಿಗೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು.</verse>
				<verse number="24">ದೇವರು ತಮ್ಮ ಜನರನ್ನು ಬಹಳ ಅಭಿವೃದ್ಧಿಗೊಳಿಸಿ, ಅವರನ್ನು ವೈರಿಗಳಿಗಿಂತ ಬಲಿಷ್ಟರನ್ನಾಗಿ ಮಾಡಿದರು.</verse>
				<verse number="25">ತಮ್ಮ ಜನರನ್ನು ದ್ವೇಷಿಸುವಂತೆಯೂ, ತಮ್ಮ ಸೇವಕರನ್ನು ಕುಯುಕ್ತಿಯಿಂದ ನಡೆಸುವಂತೆಯೂ ದೇವರು ಅವರ ಹೃದಯವನ್ನು ಮಾರ್ಪಡಿಸಿದನು.</verse>
				<verse number="26">ದೇವರು ತಮ್ಮ ಸೇವಕ ಮೋಶೆಯನ್ನೂ, ಆಯ್ದುಕೊಂಡ ಆರೋನನನ್ನೂ ಕಳುಹಿಸಿದರು.</verse>
				<verse number="27">ಇವರು ದೇವರ ಸೂಚಕಕಾರ್ಯಗಳನ್ನೂ, ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು.</verse>
				<verse number="28">ದೇವರು ಕತ್ತಲೆಯನ್ನು ಕಳುಹಿಸಿ, ದೇಶವನ್ನೆಲ್ಲಾ ಕತ್ತಲು ಮಾಡಿದರು. ದೇವರ ಮಾತಿಗೆ ಈಜಿಪ್ಟನವರು ವಿರೋಧವಾಗಿ ತಿರುಗಿ ಬಿದ್ದರಲ್ಲವೇ?</verse>
				<verse number="29">ದೇವರು ಅವರ ನೀರನ್ನು ರಕ್ತವಾಗಿ ಮಾರ್ಪಡಿಸಿದರು. ಅವರ ಮೀನುಗಳನ್ನು ನಾಶಮಾಡಿದರು.</verse>
				<verse number="30">ಅವರ ದೇಶವು ಕಪ್ಪೆಗಳಿಂದ ತುಂಬಿಕೊಂಡಿತು; ಅವರ ಅರಸುಗಳ ಕೊಠಡಿಗಳಲ್ಲಿ ಸಹ ಅವು ನುಗ್ಗಿದವು.</verse>
				<verse number="31">ದೇವರು ಆಜ್ಞಾಪಿಸಲು ನೊಣದ ಗುಂಪುಗಳೂ, ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು.</verse>
				<verse number="32">ದೇವರು ಕಲ್ಮಳೆಯನ್ನೂ, ಅಗ್ನಿ ಜ್ವಾಲೆಗಳನ್ನೂ ಅವರ ದೇಶದಲ್ಲಿ ಬರಮಾಡಿದರು.</verse>
				<verse number="33">ಅವರ ದ್ರಾಕ್ಷಿಯ ಬಳ್ಳಿ, ಅಂಜೂರದ ಗಿಡಗಳು ಹಾಗೂ ಅವರ ಮೇರೆಗಳ ಮರಗಳು ಮುರಿದು ಬಿದ್ದವು.</verse>
				<verse number="34">ದೇವರು ಆಜ್ಞಾಪಿಸಲು ಮಿಡತೆಗಳೂ, ಲೆಕ್ಕವಿಲ್ಲದ ಕಂಬಳಿ ಹುಳುಗಳೂ ಬಂದವು.</verse>
				<verse number="35">ಅವು ಈಜಿಪ್ಟ್ ದೇಶದಲ್ಲಿ ಎಲ್ಲಾ ಸಸ್ಯಗಳನ್ನು ತಿಂದುಬಿಟ್ಟವು; ಅವರ ಭೂಮಿಯ ಫಲಗಳನ್ನು ಸಹ ತಿಂದುಬಿಟ್ಟವು.</verse>
				<verse number="36">ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲ ಮಕ್ಕಳೂ ಅವರ ಎಲ್ಲಾ ಪ್ರಮುಖರೂ ದೇವರ ಬಾಧೆಗೆ ಒಳಗಾದರು.</verse>
				<verse number="37">ದೇವರು ಬೆಳ್ಳಿ ಬಂಗಾರಗಳ ಸಂಗಡ ಇಸ್ರಾಯೇಲರನ್ನು ಹೊರಗೆ ಬರಮಾಡಿದರು. ಅವರ ಗೋತ್ರಗಳಲ್ಲಿ ಬಲಹೀನನಾದ ಒಬ್ಬನೂ ಇರಲಿಲ್ಲ.</verse>
				<verse number="38">ಅವರೆಲ್ಲರೂ ಹೊರಗೆ ಹೋಗುವಾಗ ಈಜಿಪ್ಟ್ ದೇಶವು ಸಂತೋಷಿಸಿತು; ಏಕೆಂದರೆ ಈಜಿಪ್ಟಿನವರಿಗೆ ಅವರನ್ನು ಕುರಿತು ಹೆದರಿಕೆ ಇತ್ತು.</verse>
				<verse number="39">ದೇವರು ಇಸ್ರಾಯೇಲರ ನೆರಳಿಗೋಸ್ಕರ ಮೇಘವನ್ನೂ, ರಾತ್ರಿಯಲ್ಲಿ ಬೆಳಕಿಗೋಸ್ಕರ ಬೆಂಕಿಯನ್ನೂ ಏರ್ಪಡಿಸಿದರು.</verse>
				<verse number="40">ಅವರು ಕೇಳಿದಾಗ ದೇವರು ಲಾವಕ್ಕಿಗಳನ್ನು ಬರಮಾಡಿ, ಪರಲೋಕದ ಆಹಾರದಿಂದ ಅವರನ್ನು ತೃಪ್ತಿಪಡಿಸಿದರು.</verse>
				<verse number="41">ದೇವರು ಬಂಡೆಯನ್ನು ತೆರೆಯಲು ನೀರು ಹೊರಟಿತು; ಅದು ಮರುಭೂಮಿಯಲ್ಲಿ ನದಿಯಾಗಿ ಹರಿಯಿತು.</verse>
				<verse number="42">ಹೀಗೆ ದೇವರು ತಮ್ಮ ಪರಿಶುದ್ಧ ವಾಗ್ದಾನವನ್ನೂ, ತಮ್ಮ ಸೇವಕನಾದ ಅಬ್ರಹಾಮನನ್ನೂ ಜ್ಞಾಪಕಮಾಡಿಕೊಂಡರು.</verse>
				<verse number="43">ದೇವರು ತಮ್ಮ ಜನರನ್ನು ಆನಂದದಿಂದಲೂ, ತಾವು ಆಯ್ದುಕೊಂಡವರನ್ನು ಉತ್ಸಾಹದಿಂದಲೂ ಹೊರತಂದರು.</verse>
				<verse number="44">ದೇವರು ಜನಾಂಗಗಳ ದೇಶಗಳನ್ನು ಅವರಿಗೆ ಕೊಟ್ಟರು. ಇಸ್ರಾಯೇಲರು ಇತರರ ಕಷ್ಟಾರ್ಜಿತವನ್ನು ತಮಗಾಗಿ ಸ್ವಾಧೀನಮಾಡಿಕೊಂಡರು.</verse>
				<verse number="45">ದೇವರ ಸೂತ್ರಗಳನ್ನು ಕೈಗೊಂಡು, ಅವರ ನಿಯಮಗಳನ್ನು ಇಸ್ರಾಯೇಲರು ಕಾಯಬೇಕೆಂಬ ಉದ್ದೇಶದಿಂದಲೇ ಹೀಗೆಲ್ಲಾ ಆಯಿತು. ಯೆಹೋವ ದೇವರನ್ನು ಸ್ತುತಿಸಿರಿ.</verse>
			</chapter>
			<chapter number="106">
				<verse number="1">ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ; ಅವರು ಒಳ್ಳೆಯವರು. ಅವರ ಪ್ರೀತಿ ಶಾಶ್ವತವಾಗಿರುವುದು.</verse>
				<verse number="2">ಯೆಹೋವ ದೇವರ ಪರಾಕ್ರಮ ಕ್ರಿಯೆಗಳನ್ನು ಪ್ರಕಟಿಸಿರಿ, ದೇವರನ್ನು ತಕ್ಕಂತೆ ಸ್ತುತಿಸುವವರು ಯಾರಿಗೆ ಸಾಧ್ಯ?</verse>
				<verse number="3">ನ್ಯಾಯವನ್ನು ಕಾಪಾಡಿಕೊಂಡು ಯಾವಾಗಲೂ ಸರಿಯಾದವುಗಳನ್ನು ಪಾಲಿಸುವವರು ಧನ್ಯರು.</verse>
				<verse number="4">ದೇವರೇ, ನಿಮ್ಮ ಜನರ ಮೇಲಿರುವ ಮೆಚ್ಚುಗೆಯಿಂದ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ, ನಿಮ್ಮ ರಕ್ಷಣೆಯಿಂದ ನನ್ನನ್ನು ದರ್ಶಿಸಿರಿ.</verse>
				<verse number="5">ಯೆಹೋವ ದೇವರೇ, ನಾನು ನೀವು ಆಯ್ದುಕೊಂಡವರ ಸುಖವನ್ನು ಕಂಡು, ನಿಮ್ಮ ಜನರ ಸಂತೋಷದೊಂದಿಗೆ ಸಂತೋಷಿಸಿ, ನಿಮ್ಮ ಸ್ವಕೀಯರ ಸಂಗಡ ಹೊಗಳಿಕೊಳ್ಳುವೆನು.</verse>
				<verse number="6">ನಮ್ಮ ಪಿತೃಗಳಂತೆ ನಾವು ಕೂಡಾ ಪಾಪಮಾಡಿದ್ದೇವೆ; ಅಕ್ರಮ ಮಾಡಿದ್ದೇವೆ; ದುಷ್ಟಕೃತ್ಯಗಳನ್ನು ನಡೆಸಿದ್ದೇವೆ.</verse>
				<verse number="7">ನಮ್ಮ ಪಿತೃಗಳು ಈಜಿಪ್ಟಿನಲ್ಲಿ ನಿಮ್ಮ ಅದ್ಭುತಗಳಿಗೆ ಲಕ್ಷಕೊಡದೆ, ನಿಮ್ಮ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ ಅಂದರೆ ಕೆಂಪುಸಮುದ್ರದ ಹತ್ತಿರ ತಿರುಗಿಬಿದ್ದರು.</verse>
				<verse number="8">ಆದರೂ ದೇವರು ತಮ್ಮ ಮಹಾಶಕ್ತಿಯನ್ನು ಅವರಿಗೆ ತಿಳಿಯಮಾಡುವ ಹಾಗೆ, ತಮ್ಮ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದರು.</verse>
				<verse number="9">ದೇವರು ಕೆಂಪು ಸಮುದ್ರವನ್ನು ಗದರಿಸಲು, ಅದು ಒಣಗಿ ಹೋಯಿತು; ಹೀಗೆ ಮರುಭೂಮಿಯಲ್ಲಿ ನಡೆದು ಹೋದಂತೆ ಜಲಾಗಾಧದಲ್ಲಿ ಇಸ್ರಾಯೇಲರನ್ನು ನಡೆಸಿದರು.</verse>
				<verse number="10">ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿದರು, ಶತ್ರುವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದರು.</verse>
				<verse number="11">ಪ್ರವಾಹಗಳು ಅವರ ವೈರಿಗಳನ್ನು ಮುಚ್ಚಿಬಿಟ್ಟವು, ವೈರಿಗಳಲ್ಲಿ ಒಬ್ಬನೂ ಉಳಿಯಲಿಲ್ಲ.</verse>
				<verse number="12">ಆಗ ಅವರು ದೇವರ ಮಾತುಗಳನ್ನು ನಂಬಿ, ದೇವರಿಗೆ ಸ್ತೋತ್ರವನ್ನು ಹಾಡಿದರು.</verse>
				<verse number="13">ಆದರೆ ಬೇಗನೇ ದೇವರು ಮಾಡಿದ ಕೆಲಸಗಳನ್ನು ಮರೆತುಬಿಟ್ಟು, ದೇವರ ಸಂಕಲ್ಪಕ್ಕೆ ಅವರು ಕಾದುಕೊಳ್ಳದೆ ಹೋದರು.</verse>
				<verse number="14">ಮರುಭೂಮಿಯಲ್ಲಿ ದುರಾಶೆಯಿಂದ ಆಶಿಸಿ, ಹಾಳು ಪ್ರದೇಶದಲ್ಲಿ ದೇವರನ್ನು ಪರೀಕ್ಷಿಸಿದರು.</verse>
				<verse number="15">ಆಗ ದೇವರು ಅವರ ಬೇಡಿಕೆಯಂತೆಯೇ ಅವರಿಗೆ ಕೊಟ್ಟುಬಿಟ್ಟರು; ಆದರೆ ಅವರ ದೇಹಕ್ಕೆ ಭೀಕರ ರೋಗವನ್ನು ಸಹ ಅನುಮತಿಸಿದರು.</verse>
				<verse number="16">ಇಸ್ರಾಯೇಲರು ಪಾಳೆಯದಲ್ಲಿ ಮೋಶೆಯ ಮೇಲೆಯೂ, ಯೆಹೋವ ದೇವರಿಗೆ ಪ್ರತಿಷ್ಠಿತನಾದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಟ್ಟರು.</verse>
				<verse number="17">ಆಗ ಭೂಮಿಯು ಬಾಯಿತೆರೆದು ದಾತಾನನನ್ನು ನುಂಗಿ, ಅಬೀರಾಮನ ಗುಂಪನ್ನು ಮುಚ್ಚಿಬಿಟ್ಟಿತು.</verse>
				<verse number="18">ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು.</verse>
				<verse number="19">ಅವರು ಹೋರೇಬಿನಲ್ಲಿ ಎರಕದ ಕರುವನ್ನು ಮಾಡಿ, ಆ ವಿಗ್ರಹಕ್ಕೆ ಅಡ್ಡಬಿದ್ದರು.</verse>
				<verse number="20">ಹೀಗೆ ಅವರು ತಮ್ಮ ಮಹಿಮೆಯುಳ್ಳ ದೇವರನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು.</verse>
				<verse number="21">ಅವರು ತಮ್ಮನ್ನು ರಕ್ಷಿಸಿದ ದೇವರನ್ನು ಬೇಗ ಮರೆತುಬಿಟ್ಟರು. ಹೌದು, ಈಜಿಪ್ಟ್ ದೇಶದಲ್ಲಿ ಮಹತ್ಕಾರ್ಯಗಳನ್ನೂ,</verse>
				<verse number="22">ಹಾಮ ದೇಶದಲ್ಲಿ ಅದ್ಭುತಗಳನ್ನೂ, ಕೆಂಪುಸಮುದ್ರದ ಬಳಿಯಲ್ಲಿ ಅತಿಶಯವಾದವುಗಳನ್ನೂ ಮಾಡಿದ ದೇವರನ್ನು ಮರೆತುಬಿಟ್ಟರು.</verse>
				<verse number="23">ಆದ್ದರಿಂದ ದೇವರು ಅವರಿಗೆ ಪೂರ್ಣದಂಡನೆ ಕೊಡುವುದಾಗಿ ಹೇಳಿದರು. ಆದರೆ ಅವರು ಆಯ್ದುಕೊಂಡ ಮೋಶೆಯು, ದೇವರ ಕಠಿಣ ತೀರ್ಮಾನವನ್ನು ಶಾಂತಪಡಿಸಲು ಆಪತ್ತಿನಲ್ಲಿ ದೇವರ ಮುಂದೆ ಮಧ್ಯಸ್ಥನಾಗಿ ನಿಂತುಕೊಂಡನು.</verse>
				<verse number="24">ಹೌದು, ಇಸ್ರಾಯೇಲರು ಮನೋಹರವಾದ ದೇಶವನ್ನು ಹೀನೈಸಿ, ದೇವರ ಮಾತನ್ನು ನಂಬದೆ ಹೋದರು.</verse>
				<verse number="25">ತಮ್ಮ ಗುಡಾರಗಳಲ್ಲಿ ಗೊಣಗುಟ್ಟಿ ಯೆಹೋವ ದೇವರ ಮಾತನ್ನು ಹೇಳದೆ ಹೋದರು.</verse>
				<verse number="26">ಆದ್ದರಿಂದ ದೇವರು ಅವರನ್ನು ಮರುಭೂಮಿಯಲ್ಲಿ ಬೀಳುವಂತೆಯೂ, ಅವರ ಸಂತತಿಯರು ದೇಶಗಳಲ್ಲಿ ಚದರಿಸುವಂತೆಯೂ</verse>
				<verse number="27">ತಮ್ಮ ಕೈಯನ್ನು ಎತ್ತಿ ಅವರಿಗೆ ಪ್ರಮಾಣ ಮಾಡಬೇಕಾಯಿತು.</verse>
				<verse number="28">ಇಸ್ರಾಯೇಲರು ಬಾಳ್ ಪೆಯೋರನ ದೇವತೆಗೆ ತಮ್ಮನ್ನು ಒಪ್ಪಿಸಿಕೊಟ್ಟರು; ಜೀವವಿಲ್ಲದ ದೇವರುಗಳಿಗೆ ಅರ್ಪಿಸಿದ ಯಜ್ಞಗಳನ್ನು ತಿಂದರು.</verse>
				<verse number="29">ತಮ್ಮ ಕ್ರಿಯೆಗಳಿಂದ ದೇವರನ್ನು ಅಸಂತೋಷಪಡಿಸಿದರು. ಆದ್ದರಿಂದ ವ್ಯಾಧಿಯು ಅವರಲ್ಲಿ ಹಬ್ಬಿತು.</verse>
				<verse number="30">ಆಗ ಫೀನೆಹಾಸನು ಎದ್ದು ಬಂದು ದಂಡಿಸಿದ್ದರಿಂದ ವ್ಯಾಧಿ ನಿಂತುಹೋಯಿತು.</verse>
				<verse number="31">ಇದು ತಲತಲಾಂತರಕ್ಕೂ, ಯುಗಯುಗಕ್ಕೂ ಫೀನೆಹಾಸನಿಗೆ ನೀತಿ ಎಂದು ಎಣಿಸಲಾಯಿತು.</verse>
				<verse number="32">ಮೆರೀಬಾದ ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಅಲ್ಲಿ ಅವರ ನಿಮಿತ್ತ ಮೋಶೆಗೆ ಕೇಡು ಬಂತು.</verse>
				<verse number="33">ಏಕೆಂದರೆ ಇಸ್ರಾಯೇಲರು ದೇವರ ಆತ್ಮನಿಗೆ ತಿರುಗಿ ಬಿದ್ದದ್ದರಿಂದ, ಮೋಶೆ ದುಡುಕಿ ಮಾತನಾಡಿದನು.</verse>
				<verse number="34">ಯೆಹೋವ ದೇವರು ಅವರಿಗೆ ಆಜ್ಞಾಪಿಸಿದ ಜನಗಳನ್ನು ಅವರು ದಂಡಿಸದೆ ಹೋದರು.</verse>
				<verse number="35">ಆದರೆ ಇತರ ಜನಾಂಗಗಳ ಸಂಗಡ ಕೂಡಿಕೊಂಡು, ಅವರ ಪದ್ಧತಿಗಳನ್ನು ಕಲಿತುಕೊಂಡರು.</verse>
				<verse number="36">ಅವರ ವಿಗ್ರಹಗಳಿಗೆ ಆರಾಧನೆ ಮಾಡಿದರು; ಅವು ಅವರಿಗೆ ಉರುಲಿನಂತಾದವು.</verse>
				<verse number="37">ತಮ್ಮ ಗಂಡು ಮಕ್ಕಳನ್ನೂ, ಹೆಣ್ಣು ಮಕ್ಕಳನ್ನೂ ಸುಳ್ಳು ದೇವರುಗಳಿಗೆ ಬಲಿಕೊಟ್ಟರು.</verse>
				<verse number="38">ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ, ದೇಶವನ್ನು ರಕ್ತದಿಂದ ಅಶುದ್ಧ ಮಾಡಿದರು.</verse>
				<verse number="39">ಹೀಗೆ ತಮ್ಮ ದುಷ್ಕೃತ್ಯಗಳಿಂದ ತಮ್ಮನ್ನು ಅಪವಿತ್ರ ಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ದುರಾಚಾರಿಗಳಾದರು.</verse>
				<verse number="40">ಆಗ ಯೆಹೋವ ದೇವರು ತಮ್ಮ ಜನರ ಮೇಲೆ ಬಹು ಬೇಸರಗೊಂಡರು. ದೇವರು ತಮ್ಮ ವಾರಸುದಾರರಾದ ಇಸ್ರಾಯೇಲರ ಮೇಲೆ ಅಸಂತೋಷಗೊಂಡು,</verse>
				<verse number="41">ಅವರನ್ನು ಇತರ ಜನಾಂಗಗಳ ಕೈಗೆ ಒಪ್ಪಿಸಿಕೊಟ್ಟರು. ಹೀಗೆ ಅವರ ವೈರಿಗಳು ಅವರನ್ನು ಆಳಿದರು.</verse>
				<verse number="42">ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅವರು ಅಧೀನರಾದರು.</verse>
				<verse number="43">ಅನೇಕ ಸಾರಿ ದೇವರು ಇಸ್ರಾಯೇಲರನ್ನು ಬಿಡಿಸಿದರು, ಆದರೆ ಅವರು ತಿರುಗಿಬೀಳುತ್ತಲೇ ಇದ್ದರು; ತಮ್ಮ ಅಕ್ರಮದಿಂದಲೇ ಅವರು ಕುಗ್ಗಿಹೋದರು;</verse>
				<verse number="44">ಆದರೂ ಅವರ ಕೂಗನ್ನು ದೇವರು ಕೇಳಿದಾಗ ಇಕ್ಕಟ್ಟಿನಲ್ಲಿದ್ದ ಅವರ ಮೇಲೆ ಲಕ್ಷ್ಯವಿಟ್ಟು,</verse>
				<verse number="45">ಅವರಿಗಾಗಿ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಅತಿಶಯವಾದ ಪ್ರೀತಿಯ ಪ್ರಕಾರ,</verse>
				<verse number="46">ಅವರನ್ನು ಸೆರೆಹಿಡಿದವರ ಕರುಣೆ ತೋರುವಂತೆ ಮಾಡಿದರು.</verse>
				<verse number="47">ನಮ್ಮ ದೇವರಾದ ಯೆಹೋವ ದೇವರೇ, ನಾವು ನಿಮ್ಮ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ, ನಿಮ್ಮ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ, ನಮ್ಮನ್ನು ರಕ್ಷಿಸಿರಿ.</verse>
				<verse number="48">ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲರೂ, “ಆಮೆನ್!” ಎಂದು ಹೇಳಲಿ. ನೀವು ಯೆಹೋವ ದೇವರನ್ನು ಸ್ತುತಿಸಿರಿ.</verse>
			</chapter>
			<chapter number="107">
				<verse number="1">ಯೆಹೋವ ದೇವರನ್ನು ಕೊಂಡಾಡಿರಿ, ಅವರು ಒಳ್ಳೆಯವರು; ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.</verse>
				<verse number="2">ಯೆಹೋವ ದೇವರು ವಿಮೋಚಿಸಿದವರು ಹಾಗೆ ಹೇಳಲಿ; ವೈರಿಯ ಕೈಯಿಂದ ಬಿಡುಗಡೆಯಾದವರು ಆ ಕಥೆಯನ್ನು ಹೇಳಲಿ</verse>
				<verse number="3">ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ದೇಶಗಳಿಂದ ಕೂಡಿಸಿದವರು ಸಹ ಹಾಗೆ ಹೇಳಲಿ.</verse>
				<verse number="4">ಮರುಭೂಮಿಯಲ್ಲಿಯೂ, ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು, ವಾಸಿಸುವುದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ ಹೋದರು.</verse>
				<verse number="5">ಹಸಿದು, ದಾಹಗೊಂಡು ಅವರ ಪ್ರಾಣವು ಕುಗ್ಗಿಹೋಯಿತು.</verse>
				<verse number="6">ಆಗ ಅವರು ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆ ಇಟ್ಟರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿದರು.</verse>
				<verse number="7">ಜನರು ವಾಸಿಸುವ ಪಟ್ಟಣಕ್ಕೆ ಹೋಗುವಹಾಗೆ, ಜನರನ್ನು ಸರಿಯಾದ ಹಾದಿಯಲ್ಲಿ ನಡೆಸಿದರು.</verse>
				<verse number="8">ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರ ಉಪಕಾರಮಾಡಲಿ, ಮಾನವರಿಗೆ ದೇವರು ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.</verse>
				<verse number="9">ದೇವರು ದಾಹಪಟ್ಟ ಪ್ರಾಣವನ್ನು ತೃಪ್ತಿಪಡಿಸಿ, ಹಸಿದ ಪ್ರಾಣವನ್ನು ಒಳ್ಳೆಯದರಿಂದ ತುಂಬಿಸಿದ್ದಾರೆ.</verse>
				<verse number="10">ಕೆಲವರು ಕತ್ತಲಲ್ಲಿ ಮತ್ತು ಮರಣದ ನೆರಳಿನಲ್ಲಿ ಕುಳಿತರು, ಕೆಲವರು ಸಂಕಟದಲ್ಲಿಯೂ, ಕಬ್ಬಿಣದ ಬೇಡಿಗಳಲ್ಲಿ ಬಂಧಿತರಾಗಿ ಸೆರೆಬಿದ್ದವರು ಕೆಲವರು.</verse>
				<verse number="11">ಅವರು ದೇವರ ಮಾತುಗಳನ್ನು ಎದುರಿಸಿ, ಮಹೋನ್ನತರ ಯೋಜನೆಯ ಬಗ್ಗೆ ಹೀನೈಯಿಸಿದ್ದರಿಂದ ಅವರಿಗೆ ಹಾಗಾಯಿತು.</verse>
				<verse number="12">ದೇವರು ಅವರ ಹೃದಯವನ್ನು ಕಷ್ಟದಿಂದ ತಗ್ಗಿಸಿದಾಗ ಸಹಾಯಕನಿಲ್ಲದೆ ಕೆಳಗೆ ಬಿದ್ದರು.</verse>
				<verse number="13">ಆಗ ಅವರು ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆ ಇಟ್ಟರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ರಕ್ಷಿಸಿದರು.</verse>
				<verse number="14">ಕತ್ತಲೆಯೊಳಗಿಂದಲೂ, ಮರಣದ ನೆರಳಿನಿಂದಲೂ ದೇವರು ಅವರನ್ನು ಹೊರಗೆ ತಂದು ಅವರ ಬಂಧನಗಳನ್ನು ಮುರಿದುಬಿಟ್ಟರು.</verse>
				<verse number="15">ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರವೂ, ದೇವರು ಮಾನವರಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.</verse>
				<verse number="16">ದೇವರು ಕಂಚಿನ ಕದಗಳನ್ನು ಮುರಿದು ಕಬ್ಬಿಣದ ಅಗುಳಿಗಳನ್ನು ಕಡಿದುಬಿಟ್ಟಿದ್ದಾರೆ.</verse>
				<verse number="17">ಮೂಢರು ತಮ್ಮ ದ್ರೋಹದಿಂದಲೂ ಕೆಲವರು ತಮ್ಮ ಅಕ್ರಮಗಳಿಂದಲೂ ಶ್ರಮೆ ಪಡುತ್ತಾರೆ.</verse>
				<verse number="18">ಅವರ ಪ್ರಾಣವು ಎಲ್ಲಾ ಆಹಾರಕ್ಕೂ ಅಸಹ್ಯಪಡುವಷ್ಟು ಅಸ್ವಸ್ಥರಾಗುತ್ತಾರೆ. ಅವರು ಮರಣದ ಬಾಗಿಲುಗಳಿಗೆ ಸಮೀಪಿಸುತ್ತಾರೆ.</verse>
				<verse number="19">ಆಗ ಅವರು ಸಹ ಇಕ್ಕಟ್ಟಿನಲ್ಲಿ ಅವರು ಯೆಹೋವ ದೇವರಿಗೆ ಕೂಗಿದರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ರಕ್ಷಿಸಿದರು.</verse>
				<verse number="20">ದೇವರು ತಮ್ಮ ವಾಕ್ಯವನ್ನು ಕಳುಹಿಸಿ, ಅವರನ್ನು ಸ್ವಸ್ಥಮಾಡಿದರು; ನಾಶನದಿಂದಲೂ ಅವರನ್ನು ತಪ್ಪಿಸಿದರು.</verse>
				<verse number="21">ಅವರು ಯೆಹೋವ ದೇವರನ್ನು ಒಡಂಬಡಿಕೆಯ ಕುಂದದ ಪ್ರೀತಿಗೋಸ್ಕರವೂ, ಅವರು ಮಾನವರಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.</verse>
				<verse number="22">ಧನ್ಯವಾದ ಬಲಿಗಳನ್ನು ಅರ್ಪಿಸಿ, ದೇವರ ಕೆಲಸಗಳನ್ನು ಉತ್ಸಾಹದಿಂದ ಸಾರಲಿ.</verse>
				<verse number="23">ಕೆಲವರು ಹಡಗುಗಳಲ್ಲಿ ಸಮುದ್ರಕ್ಕೆ ಇಳಿದು ಹೋಗುತ್ತಾರೆ. ಅವರು ಜಲರಾಶಿಯಲ್ಲಿ ವ್ಯಾಪಾರ ಮಾಡುವವರು,</verse>
				<verse number="24">ಯೆಹೋವ ದೇವರ ಕೆಲಸಗಳನ್ನೂ, ಅಗಾಧ ಜಲದಲ್ಲಿ ದೇವರ ಅದ್ಭುತಗಳನ್ನೂ ಕಾಣುತ್ತಾರೆ.</verse>
				<verse number="25">ದೇವರು ಆಜ್ಞಾಪಿಸಿ ಬಿರುಗಾಳಿಯನ್ನು ಎಬ್ಬಿಸಿದರು; ಅದು ಅದರ ತೆರೆಗಳನ್ನು ಎಬ್ಬಿಸಿತು.</verse>
				<verse number="26">ಅವರು ಆಕಾಶದವರೆಗೆ ಏರುತ್ತಾರೆ, ತಿರುಗಿ ಅಗಾಧಗಳವರೆಗೆ ಇಳಿಯುತ್ತಾರೆ; ಅಪಾಯದಲ್ಲಿ ಅವರ ಪ್ರಾಣವು ಕಳವಳದಿಂದ ಕರಗಿ ಹೋಗುತ್ತದೆ.</verse>
				<verse number="27">ಅವರು ಅತ್ತಿತ್ತ ತೂಗಾಡಿ ಕುಡುಕರಂತೆ ಓಲಾಡುತ್ತಿದ್ದರು. ಅವರ ಜ್ಞಾನವೆಲ್ಲಾ ಮುಗಿದು ಹೋಯಿತು.</verse>
				<verse number="28">ಆಗ ಅವರು ಸಹ ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆಯಿಟ್ಟರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿದನು.</verse>
				<verse number="29">ದೇವರು ಬಿರುಗಾಳಿಯನ್ನು ಶಾಂತ ಮಾಡಿದರು. ಅದರ ತೆರೆಗಳು ನಿಂತುಹೋದವು.</verse>
				<verse number="30">ಅವು ಶಾಂತವಾದಾಗ ಜನರು ಸಂತೋಷಪಟ್ಟರು. ಹೀಗೆ ಅವರು ಅಪೇಕ್ಷಿಸಿದ ಬಂದರಿಗೆ ದೇವರು ಅವರನ್ನು ನಡೆಸಿದರು.</verse>
				<verse number="31">ಅವರು ಯೆಹೋವ ದೇವರನ್ನು ಒಡಂಬಡಿಕೆಯ ಪ್ರೀತಿಗೋಸ್ಕರವೂ, ಅವರು ಮಾನವರಿಗೆ ಮಾಡುವ ಅದ್ಭುತಗಳಿಗೋಸ್ಕರವೂ ಕೊಂಡಾಡಲಿ.</verse>
				<verse number="32">ಜನರ ಸಭೆಯಲ್ಲಿ ದೇವರನ್ನು ಕೊಂಡಾಡಲಿ, ಹಿರಿಯರ ಸಭೆಯಲ್ಲಿ ದೇವರನ್ನು ಸ್ತುತಿಸಲಿ.</verse>
				<verse number="33">ದೇವರು ನದಿಗಳನ್ನು ಮರುಭೂಮಿಯಾಗಿ ಮಾರ್ಪಡಿಸಿದರು, ನೀರಿನ ಬುಗ್ಗೆಗಳನ್ನು ದಾಹಗೊಂಡ ಭೂಮಿಯಂತೆ ಮಾಡಿದರು.</verse>
				<verse number="34">ದೇವರು ಫಲವುಳ್ಳ ಭೂಮಿಯನ್ನು ಬಂಜರಾಗುವಂತೆ ಮಾಡಿದರು. ಇದಕ್ಕೆಲ್ಲ ಕಾರಣ ಅದರ ನಿವಾಸಿಗಳ ಕೆಟ್ಟತನವೇ ಆಗಿತ್ತು.</verse>
				<verse number="35">ದೇವರು ಮರುಭೂಮಿಯನ್ನು ನೀರಿನ ಕೆರೆಯಾಗಿಯೂ, ಒಣ ಭೂಮಿಯನ್ನು ನೀರಿನ ಬುಗ್ಗೆಗಳಾಗಿಯೂ ಮಾರ್ಪಡಿಸಿದರು.</verse>
				<verse number="36">ಆದರೆ ದೇವರು ಹಸಿದವರನ್ನು ಒಳ್ಳೆಯ ನಾಡಿಗೆ ನಡೆಸಿದರು; ಆ ಜನರು ವಾಸಿಸುವ ಪಟ್ಟಣವನ್ನು ಸ್ಥಾಪಿಸಿದರು.</verse>
				<verse number="37">ಅವರು ಹೊಲಗಳನ್ನು ಬಿತ್ತಿ, ದ್ರಾಕ್ಷಿಯ ಬಳ್ಳಿಗಳನ್ನು ನೆಟ್ಟರು; ಅವು ಹುಟ್ಟುವಳಿಯ ಫಲವನ್ನು ಕೊಡುವವು.</verse>
				<verse number="38">ದೇವರು ಅವರನ್ನು ಆಶೀರ್ವದಿಸಿದ್ದರಿಂದ, ಅವರು ಬಹಳವಾಗಿ ಹೆಚ್ಚಿದರು; ದೇವರು ದನಗಳು ಕಡಿಮೆಯಾಗುವಂತೆ ಮಾಡಲಿಲ್ಲ.</verse>
				<verse number="39">ಆದರೆ ಜನರು ಸಂಖ್ಯೆಯಲ್ಲಿ ಕಡಿಮೆಯಾಗಿ ಚಿಂತೆ ಸಂಕಟದಿಂದ ಕುಗ್ಗಿಹೋದರು.</verse>
				<verse number="40">ದೇವರು ಅಧಿಪತಿಗಳಿಗೆ ಶಿಸ್ತನ್ನು ನೀಡಿ, ಅವರನ್ನು ದಾರಿಯಿಲ್ಲದ ಕಾಡಿನಲ್ಲಿ ಅಲೆಯುವಂತೆ ಮಾಡಿದರು.</verse>
				<verse number="41">ಆದರೂ ದೇವರು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ, ಅವನ ಕುಟುಂಬಗಳನ್ನು ಮಂದೆಯ ಹಾಗೆ ಮಾಡಿದರು.</verse>
				<verse number="42">ನೀತಿವಂತರು ನೋಡಿ ಸಂತೋಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.</verse>
				<verse number="43">ಜ್ಞಾನಿಗಳು ಇವುಗಳನ್ನು ಗಮನಿಸಲಿ, ಯೆಹೋವ ದೇವರ ಪ್ರೀತಿಕೃತ್ಯಗಳನ್ನು ಗ್ರಹಿಸಿಕೊಳ್ಳಲಿ.</verse>
			</chapter>
			<chapter number="108">
				<verse number="1">ದೇವರೇ, ನನ್ನ ಹೃದಯವು ಸ್ಥಿರವಾಗಿದೆ; ನಾನು ಮನಃಪೂರ್ವಕವಾಗಿ ಹಾಡುತ್ತಾ, ನಿಮ್ಮ ಕೀರ್ತನೆಯನ್ನು ಮಾಡುವೆನು.</verse>
				<verse number="2">ವೀಣೆಯೇ, ಕಿನ್ನರಿಯೇ ಎಚ್ಚರವಾಗಿರಿ, ನಾನು ಉದಯವನ್ನು ಎಚ್ಚರಗೊಳಿಸುವೆನು.</verse>
				<verse number="3">ಯೆಹೋವ ದೇವರೇ, ಜನಾಂಗಗಳಲ್ಲಿ ನಾನು ನಿಮ್ಮನ್ನು ಕೊಂಡಾಡುವೆನು. ಜನರ ಮಧ್ಯದಲ್ಲಿ ನಿಮ್ಮನ್ನು ಹಾಡಿ ಕೊಂಡಾಡುವೆನು.</verse>
				<verse number="4">ಆಕಾಶಕ್ಕಿಂತ ನಿಮ್ಮ ಪ್ರೀತಿ ದೊಡ್ಡದು. ಮೇಘವನ್ನು ನಿಲುಕುವಷ್ಟು ನಿಮ್ಮ ಸತ್ಯವು ಉನ್ನತವಾಗಿವೆ.</verse>
				<verse number="5">ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ. ಭೂಮಿಯ ಮೇಲೆಲ್ಲಾ ನಿಮ್ಮ ಮಹಿಮೆಯು ಹರಡಲಿ.</verse>
				<verse number="6">ನೀವು ಪ್ರೀತಿಸುವವರು ಬಿಡುಗಡೆಯಾಗುವಂತೆ ನಿಮ್ಮ ಬಲಗೈಯಿಂದ ರಕ್ಷಿಸಿ ನಮಗೆ ಸಹಾಯಮಾಡಿರಿ.</verse>
				<verse number="7">ದೇವರು ತಮ್ಮ ಪರಿಶುದ್ಧ ಸ್ಥಳದಿಂದ ಹೀಗೆ ನುಡಿದಿದ್ದಾರೆ: “ನಾನು ಜಯದಿಂದ ಶೆಕೆಮ್ ಪ್ರದೇಶವನ್ನು ಹಂಚುವೆನು. ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು.</verse>
				<verse number="8">ಗಿಲ್ಯಾದ್ ನನ್ನದು; ಮನಸ್ಸೆ ನನ್ನದು, ಎಫ್ರಾಯೀಮ್ ನನ್ನ ಶಿರಸ್ತ್ರಾಣ, ಯೆಹೂದವು ನನ್ನ ರಾಜದಂಡ.</verse>
				<verse number="9">ಮೋವಾಬ್ ನನ್ನ ಸ್ನಾನ ಪಾತ್ರೆಯು, ಎದೋಮ್ ನನ್ನ ಕೆರಗಳ ಸ್ಥಳ. ಫಿಲಿಷ್ಟಿಯರ ಮೇಲೆ ಜಯೋತ್ಸಾಹ ಮಾಡುವೆನು.”</verse>
				<verse number="10">ಕೋಟೆಯ ಪಟ್ಟಣಕ್ಕೆ ನನ್ನನ್ನು ಕರೆತರುವವರು ಯಾರು? ಎದೋಮಿಗೆ ನನ್ನನ್ನು ನಡೆಸುವವರು ಯಾರು?</verse>
				<verse number="11">ದೇವರೇ, ಈಗ ನೀವು ನಮ್ಮ ಸೈನ್ಯಗಳ ಸಂಗಡ ಹೊರಡುವುದಿಲ್ಲವೋ ನಮ್ಮನ್ನು ಕೈಬಿಟ್ಟಿದ್ದೀರೋ?</verse>
				<verse number="12">ವೈರಿಗಳ ವಿರೋಧ ನಮಗೆ ಸಹಾಯಮಾಡಿರಿ. ಮನುಷ್ಯರ ಸಹಾಯವು ವ್ಯರ್ಥ.</verse>
				<verse number="13">ದೇವರಿಂದ ನಾವು ಜಯ ಹೊಂದುವೆವು. ದೇವರೇ ನಮ್ಮ ವೈರಿಗಳನ್ನು ತುಳಿದುಬಿಡುವರು.</verse>
			</chapter>
			<chapter number="109">
				<verse number="1">ನಾನು ಸ್ತುತಿಸುವ ದೇವರೇ, ನೀವು ಮೌನವಾಗಿರಬೇಡಿರಿ.</verse>
				<verse number="2">ದುಷ್ಟರೂ, ವಂಚಕರೂ ತಮ್ಮ ಬಾಯಿಯನ್ನು ನನಗೆ ವಿರೋಧವಾಗಿ ತೆರೆದಿದ್ದಾರೆ; ಸುಳ್ಳಿನ ನಾಲಿಗೆಯಿಂದ ನನಗೆ ವಿರೋಧವಾಗಿ ಮಾತಾಡಿದ್ದಾರೆ.</verse>
				<verse number="3">ದ್ವೇಷ ಮಾತುಗಳಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧ ಮಾಡುತ್ತಿದ್ದಾರೆ.</verse>
				<verse number="4">ನನ್ನ ಸ್ನೇಹಕ್ಕೆ ಬದಲಾಗಿ ನನ್ನ ಮೇಲೆ ದೂರು ಹೇಳುತ್ತಾರೆ; ಆದರೆ ನಾನು ಪ್ರಾರ್ಥನೆಯ ಮನುಷ್ಯನು.</verse>
				<verse number="5">ನನಗೆ ಉಪಕಾರಕ್ಕೆ ಬದಲಾಗಿ ಕೇಡನ್ನು ಮಾಡುತ್ತಿದ್ದಾರೆ, ನನ್ನ ಸ್ನೇಹಕ್ಕೆ ಬದಲಾಗಿ ನನ್ನ ಮೇಲೆ ದೂರು ಹೇಳುತ್ತಾರೆ.</verse>
				<verse number="6">ದುಷ್ಟನು ನನ್ನ ವೈರಿಯ ಮೇಲೆ ನೇಮಕವಾಗಲಿ; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.</verse>
				<verse number="7">ಅವನಿಗೆ ನ್ಯಾಯತೀರಿಸುವಾಗ ಅಪರಾಧಿಯೆಂದು ತೀರ್ಪು ಹೊಂದಲಿ; ಅವನ ಪ್ರಾರ್ಥನೆಯೇ ಅವನನ್ನು ಖಂಡಿಸಲಿ.</verse>
				<verse number="8">ಅವನ ದಿವಸಗಳು ಸ್ವಲ್ಪವಾಗಿರಲಿ; ಅವನ ಹುದ್ದೆಯನ್ನು ಇನ್ನೊಬ್ಬನು ತೆಗೆದುಕೊಳ್ಳಲಿ.</verse>
				<verse number="9">ಅವನ ಮಕ್ಕಳು ದಿಕ್ಕಿಲ್ಲದವರಾಗಲಿ, ಅವನ ಹೆಂಡತಿ ವಿಧವೆಯೂ ಆಗಲಿ.</verse>
				<verse number="10">ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಲಿ, ತಮ್ಮ ಹಾಳು ಮನೆಯಿಂದ ಹೊರಟು ಹೋಗಲಿ.</verse>
				<verse number="11">ಸಾಲಗಾರರು ಅವನಿಗೆ ಇರುವುದನ್ನೆಲ್ಲಾ ದೋಚಿಕೊಳ್ಳಲಿ; ಪರರು ಅವನ ಕಷ್ಟಾರ್ಜಿತವನ್ನು ಸುಲಿದುಕೊಳ್ಳಲಿ.</verse>
				<verse number="12">ಅವನಿಗೆ ದಯೆ ತೋರಿಸುವವನು ಯಾವನೂ ಇಲ್ಲದೆ ಇರಲಿ; ದಿಕ್ಕಿಲ್ಲದ ಅವನ ಮಕ್ಕಳನ್ನು ಯಾವನೂ ಕನಿಕರಿಸದಿರಲಿ.</verse>
				<verse number="13">ಅವನ ಸಂತಾನವು ಮುಗಿದು ಹೋಗಲಿ; ಎರಡನೆಯ ತಲಾಂತರದಲ್ಲಿ ಅವರ ಹೆಸರು ಅಳಿದು ಹೋಗಲಿ.</verse>
				<verse number="14">ಅವನ ಪಿತೃಗಳ ಅಕ್ರಮವು ಯೆಹೋವ ದೇವರ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ.</verse>
				<verse number="15">ಅವು ಯಾವಾಗಲೂ ಯೆಹೋವ ದೇವರ ಮುಂದೆ ಇರಲಿ; ದೇವರು ಅವರ ನೆನಪನ್ನು ಭೂಮಿಯೊಳಗಿಂದ ತೆಗೆದುಬಿಡಲಿ.</verse>
				<verse number="16">ಏಕೆಂದರೆ ಅವನು ಯಾರಿಗೂ ದಯೆ ತೋರಿಸಲಿಲ್ಲ. ಬಡವನನ್ನೂ, ದೀನನನ್ನೂ, ಮನಗುಂದಿದವನನ್ನೂ ಹಿಂಸಿಸಿ ಸಾಯಿಸಬೇಕೆಂದು ಯತ್ನಿಸಿದನು.</verse>
				<verse number="17">ಅವನು ಶಾಪಕೊಡಲು ಇಷ್ಟಪಟ್ಟನು; ಅದೇ ಅವನಿಗೆ ಬರಲಿ; ಅವನು ಆಶೀರ್ವಾದವನ್ನು ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ.</verse>
				<verse number="18">ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ, ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಿತು.</verse>
				<verse number="19">ಶಾಪವು ಅವನಿಗೆ ತೊಟ್ಟುಕೊಂಡ ಅಂಗಿಯ ಹಾಗೆಯೂ, ಯಾವಾಗಲೂ ಸೊಂಟಕ್ಕೆ ಕಟ್ಟುವ ನಡುಕಟ್ಟಿನ ಹಾಗೆಯೂ ಇರಲಿ.</verse>
				<verse number="20">ಇದು ನನಗೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಯೆಹೋವ ದೇವರಿಂದ ಪ್ರತಿಫಲವಾಗಿರಲಿ.</verse>
				<verse number="21">ಆದರೆ ಸಾರ್ವಭೌಮ ಯೆಹೋವ ದೇವರೇ, ನಿಮ್ಮ ಹೆಸರಿಗೋಸ್ಕರ ನನಗೆ ಸಹಾಯಮಾಡಿರಿ. ನಿಮ್ಮ ಪ್ರೀತಿಯ ಒಳ್ಳೆಯತನದಿಂದ ನನ್ನನ್ನು ಬಿಡಿಸಿರಿ.</verse>
				<verse number="22">ಏಕೆಂದರೆ ನಾನು ಬಡವನೂ ಅಗತ್ಯತೆಯಲ್ಲಿ ಇರುವವನೂ ಆಗಿದ್ದೇನೆ; ನನ್ನ ಹೃದಯವು ನನ್ನ ಅಂತರಂಗದಲ್ಲಿ ಗಾಯಗೊಂಡಿದೆ.</verse>
				<verse number="23">ನಾನು ಇಳಿಯುವ ನೆರಳಿನ ಹಾಗೆ ಆಗಿದ್ದೇನೆ; ಮಿಡತೆಯ ಹಾಗೆ ಹಾರಾಡುತ್ತಿದ್ದೇನೆ.</verse>
				<verse number="24">ನನ್ನ ಮೊಣಕಾಲುಗಳು ಉಪವಾಸದಿಂದ ಬಲಹೀನವಾಗಿವೆ; ನನ್ನ ದೇಹಕ್ಕೆ ಸಾರವಿಲ್ಲದೆ ಹೋಯಿತು.</verse>
				<verse number="25">ನಾನು ನನ್ನ ದೂರುಗಾರರಿಗೆ ನಿಂದೆಯಾಗಿದ್ದೇನೆ; ಅವರು ನನ್ನನ್ನು ಕಂಡು ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾರೆ.</verse>
				<verse number="26">ನನ್ನ ದೇವರಾದ ಯೆಹೋವ ದೇವರೇ, ನನಗೆ ಸಹಾಯಮಾಡಿರಿ; ನಿಮ್ಮ ಒಡಂಬಡಿಕೆಯ ಪ್ರೀತಿಯ ಪ್ರಕಾರ ನನ್ನನ್ನು ರಕ್ಷಿಸಿರಿ.</verse>
				<verse number="27">ಇದು ನಿಮ್ಮ ಕೈ ಕೆಲಸ ಎಂದು ಅವರಿಗೆ ಗೊತ್ತಾಗಲಿ, ಇದು ನಿನ್ನಿಂದಲೇ ಆಯಿತೆಂದು ಅವರು ತಿಳಿದುಕೊಳ್ಳಲಿ.</verse>
				<verse number="28">ಅವರು ಶಪಿಸಲಿ, ಆದರೆ ನೀವು ಆಶೀರ್ವದಿಸಿರಿ. ನನಗೆ ಹಾನಿಮಾಡುವವರು ನಾಚಿಕೆಪಡಲಿ; ಆದರೆ ನಿಮ್ಮ ಸೇವಕನಾದ ನಾನು ಸಂತೋಷಿಸಲಿ.</verse>
				<verse number="29">ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಳ್ಳಲಿ, ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ.</verse>
				<verse number="30">ನಾನು ಯೆಹೋವ ದೇವರನ್ನು ನನ್ನ ಬಾಯಿಯಿಂದ ಬಹಳವಾಗಿ ಕೊಂಡಾಡುವೆನು; ಅನೇಕರ ಮಧ್ಯದಲ್ಲಿ ದೇವರನ್ನು ಸ್ತುತಿಸುವೆನು.</verse>
				<verse number="31">ದೇವರು ಬಡವನ ಬಲಗಡೆಯಲ್ಲಿ ನಿಂತು, ಅವನ ಪ್ರಾಣವನ್ನು ಖಂಡಿಸುವವರಿಂದ ಅವನನ್ನು ರಕ್ಷಿಸುವರು.</verse>
			</chapter>
			<chapter number="110">
				<verse number="1">ಯೆಹೋವ ದೇವರು ನನ್ನ ಕರ್ತ ಆಗಿರುವವರಿಗೆ ಹೇಳಿದ್ದೇನೆಂದರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರಿ.”</verse>
				<verse number="2">ನಿಮ್ಮ ಬಲವಾದ ರಾಜದಂಡವನ್ನು ಯೆಹೋವ ದೇವರು ಚೀಯೋನಿನ ಹೊರಗೂ ವಿಸ್ತರಿಸುವರು. “ನಿಮ್ಮ ಶತ್ರುಗಳ ಮಧ್ಯದಲ್ಲಿ ದೊರೆತನ ಮಾಡಿರಿ,” ಎಂದು ಅವರು ನಿಮಗೆ ಹೇಳುವರು.</verse>
				<verse number="3">ನೀವು ನಿಮ್ಮ ಸೈನ್ಯವನ್ನು ಒಟ್ಟುಗೂಡಿಸುವ ದಿನದಲ್ಲಿ ನಿಮ್ಮ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಮುಂಜಾನೆಯ ಉದರದಿಂದ ಬರುವ ಇಬ್ಬನಿಯಂತೆ ನಿಮ್ಮ ಯೋಧರು ನಿಮ್ಮ ಕಡೆ ಇಳಿದು ಬರುವರು.</verse>
				<verse number="4">“ನೀವು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಯಾಜಕರಾಗಿದ್ದೀರಿ,” ಎಂದು ಯೆಹೋವ ದೇವರು ಆಣೆಯಿಟ್ಟು ಹೇಳಿದ್ದಾರೆ. ಅವರು ತಮ್ಮ ಮನಸ್ಸನ್ನು ಬದಲಾಯಿಸರು.</verse>
				<verse number="5">ಯೆಹೋವ ದೇವರು ನಿಮ್ಮ ಬಲಗಡೆಯಲ್ಲಿದ್ದಾರೆ; ಅವರು ತಮ್ಮ ತೀರ್ಪಿನ ದಿನದಲ್ಲಿ ಅರಸರನ್ನು ದಂಡಿಸುವರು.</verse>
				<verse number="6">ದೇವರು ಜನಾಂಗಗಳನ್ನು ನ್ಯಾಯತೀರಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳನ್ನು ದಂಡಿಸಿ ಅವರಿಗೆ ಮರಣದಂಡನೆ ವಿಧಿಸುವರು.</verse>
				<verse number="7">ಕರ್ತ ಆಗಿರುವವರು ದಾರಿಯುದ್ದಕ್ಕೂ ಹಳ್ಳದಿಂದ ನೀರು ಕುಡಿಯುತ್ತಾ, ಜಯದ ಮಾರ್ಗದಲ್ಲಿ ತಲೆಯೆತ್ತಿ ನಡೆದುಹೋಗುವರು.</verse>
			</chapter>
			<chapter number="111">
				<verse number="1">ಯೆಹೋವ ದೇವರನ್ನು ಸ್ತುತಿಸಿರಿ. ನಾನು ಯೆಹೋವ ದೇವರನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ, ಸಭೆಯಲ್ಲಿಯೂ ಕೊಂಡಾಡುವೆನು.</verse>
				<verse number="2">ಯೆಹೋವ ದೇವರ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷ ಪಡುವವರೆಲ್ಲರು ಅವುಗಳನ್ನೇ ಧ್ಯಾನಿಸುತ್ತಾರೆ.</verse>
				<verse number="3">ದೇವರ ಕೆಲಸವು ಘನತೆಯೂ, ಮಹಿಮೆಯೂ ಉಳ್ಳದ್ದು; ದೇವರ ನೀತಿಯು ಎಂದೆಂದಿಗೂ ನಿಲ್ಲುವುದು.</verse>
				<verse number="4">ದೇವರು ತಮ್ಮ ಅದ್ಭುತಗಳ ಜ್ಞಾಪಕವನ್ನು ಉಳಿದಿರುವಂತೆ ಮಾಡಿದ್ದಾರೆ; ಯೆಹೋವ ದೇವರು ಕೃಪೆಯೂ, ಅನುಕಂಪವೂ ಉಳ್ಳವರು.</verse>
				<verse number="5">ಅವರು ತಮಗೆ ಭಯಪಡುವವರಿಗೆ ಆಹಾರ ಕೊಟ್ಟಿದ್ದಾರೆ; ಯುಗಯುಗಕ್ಕೂ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವರು.</verse>
				<verse number="6">ಜನಾಂಗಗಳ ಬಾಧ್ಯತೆಯನ್ನು ಅವರಿಗೆ ಕೊಡುವ ಹಾಗೆ ದೇವರು ಶಕ್ತಿಯ ಕ್ರಿಯೆಗಳನ್ನು ತಮ್ಮ ಜನರಿಗೆ ತಿಳಿಸಿದ್ದಾರೆ.</verse>
				<verse number="7">ದೇವರ ಕೈಕೆಲಸಗಳು ಸತ್ಯವೂ, ನ್ಯಾಯವೂ ಆಗಿವೆ; ಅವರ ಸೂತ್ರಗಳೆಲ್ಲಾ ವಿಶ್ವಾಸಕ್ಕೆ ಯೋಗ್ಯವಾದವುಗಳು.</verse>
				<verse number="8">ಅವು ಯುಗಯುಗಾಂತರಗಳಿಗೂ ನೆಲೆಯಾಗಿ ನಿಲ್ಲುತ್ತವೆ; ಅವು ಸತ್ಯದಲ್ಲಿಯೂ, ಯಥಾರ್ಥತೆಯಲ್ಲಿಯೂ ಒಳಗೊಂಡಿರುತ್ತದೆ.</verse>
				<verse number="9">ದೇವರು ತಮ್ಮ ಜನರಿಗೆ ವಿಮೋಚನೆಯನ್ನು ಕಳುಹಿಸಿದರು; ಯುಗಯುಗಕ್ಕೂ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸಿದ್ದಾರೆ; ದೇವರ ಹೆಸರು ಪರಿಶುದ್ಧರು, ಅತಿಶಯರು ಎಂಬುದು.</verse>
				<verse number="10">ಯೆಹೋವ ದೇವರ ಭಯವು ಜ್ಞಾನದ ಮೂಲವು; ಅವರ ಸೂತ್ರಗಳನ್ನು ಕೈಗೊಳ್ಳುವವರಿಗೆ ಒಳ್ಳೆಯ ತಿಳುವಳಿಕೆ ಉಂಟಾಗುವುದು; ನಿತ್ಯ ಸ್ತೋತ್ರವು ದೇವರಿಗೆ ಸಲ್ಲಲಿ.</verse>
			</chapter>
			<chapter number="112">
				<verse number="1">ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಭಯಪಟ್ಟು ಅವರ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವವರು ಧನ್ಯರು.</verse>
				<verse number="2">ಅವರ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿಯಾಗಿರುವುದು; ಯಥಾರ್ಥರ ಸಂತತಿಯು ಆಶೀರ್ವಾದ ಹೊಂದುವುದು.</verse>
				<verse number="3">ಧನವೂ, ಐಶ್ವರ್ಯವೂ ಅವರ ಮನೆಯಲ್ಲಿ ಇರುವುದು; ಅವರ ನೀತಿಯು ಶಾಶ್ವತವಾಗಿ ಉಳಿಯುವುದು.</verse>
				<verse number="4">ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಮೂಡುವುದು; ಅವರು ಕೃಪೆಯೂ, ಅನುಕಂಪವೂ, ನೀತಿಯೂ ಉಳ್ಳವವರಾಗಿರುವರು.</verse>
				<verse number="5">ದಯೆತೋರಿಸಿ ಸಾಲಕೊಡುವವರಿಗೆ, ಒಳ್ಳೆಯದಾಗುವುದು; ಅವರು ತಮ್ಮ ಕಾರ್ಯಗಳನ್ನು ನ್ಯಾಯದಿಂದ ನಡೆಸುವರು.</verse>
				<verse number="6">ನಿಶ್ಚಯವಾಗಿ ನೀತಿವಂತರು ಎಂದೆಂದಿಗೂ ಕದಲರು; ನೀತಿವಂತರು ನಿತ್ಯವಾಗಿ ಜ್ಞಾಪಕದಲ್ಲಿ ಇರುವರು.</verse>
				<verse number="7">ಅವರಿಗೆ ಅಶುಭದ ಸುದ್ದಿಯ ಭಯ ಇರುವುದಿಲ್ಲ; ಅವರ ಹೃದಯವು ಯೆಹೋವ ದೇವರಲ್ಲಿ ಭರವಸವಿಟ್ಟು ಸ್ಥಿರವಾಗಿರುವುದು.</verse>
				<verse number="8">ಅವರ ಹೃದಯವು ಸುರಕ್ಷಿತವಾಗಿರುವುದು. ಅವರು ತಮ್ಮ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವರು, ಭಯಪಡರು.</verse>
				<verse number="9">ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಡುವರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು; ಅವನ ಬಲವು ಘನದಿಂದ ಉನ್ನತವಾಗುವುದು.</verse>
				<verse number="10">ದುಷ್ಟರು ಇದನ್ನು ಕಂಡು ವ್ಯಥೆ ಪಡುವರು; ಅವರು ತಮ್ಮ ಹಲ್ಲು ಕಡಿದು ಮರೆಯಾಗಿ ಹೋಗುವರು; ದುಷ್ಟರ ಆಶೆಯು ನಾಶವಾಗುವುದು.</verse>
			</chapter>
			<chapter number="113">
				<verse number="1">ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರ ಸೇವಕರೇ, ಯೆಹೋವ ದೇವರ ಹೆಸರನ್ನು ಸ್ತುತಿಸಿರಿ.</verse>
				<verse number="2">ಇಂದಿನಿಂದ ಯುಗಯುಗಕ್ಕೂ ಯೆಹೋವ ದೇವರ ಹೆಸರಿಗೆ ಸ್ತುತಿಯುಂಟಾಗಲಿ.</verse>
				<verse number="3">ಸೂರ್ಯೋದಯದಿಂದ ಅದರ ಅಸ್ತಮಾನದವರೆಗೂ ಯೆಹೋವ ದೇವರ ಹೆಸರು ಸ್ತುತಿಹೊಂದತಕ್ಕದ್ದು.</verse>
				<verse number="4">ಯೆಹೋವ ದೇವರು ಎಲ್ಲಾ ಜನಾಂಗಗಳ ಮೇಲೆ ಉನ್ನತವಾದವರು; ಅವರ ಮಹಿಮೆಯು ಆಕಾಶಗಳ ಮೇಲೆ ಮೆರೆಯುತ್ತದೆ.</verse>
				<verse number="5">ನಮ್ಮ ದೇವರಾದ ಯೆಹೋವ ದೇವರ ಹಾಗೆ ಯಾರು ಇದ್ದಾರೆ? ಉನ್ನತಲೋಕದಲ್ಲಿ ಅವರು ವಾಸಿಸುತ್ತಾರೆ.</verse>
				<verse number="6">ಆಕಾಶವನ್ನೂ, ಭೂಮಿಯನ್ನೂ ತಗ್ಗಿಸಿಕೊಂಡು ನೋಡುತ್ತಾರೆ.</verse>
				<verse number="7">ಧೂಳಿನೊಳಗಿಂದ ದರಿದ್ರರನ್ನು ಎಬ್ಬಿಸುತ್ತಾರೆ, ತಿಪ್ಪೆಯೊಳಗಿಂದ ಬಡವರನ್ನು ಎತ್ತುತ್ತಾರೆ.</verse>
				<verse number="8">ದೇವರು ಅವರನ್ನು ಅಧಿಪತಿಗಳ ಸಂಗಡ ಇರುವಂತೆ ಮಾಡುತ್ತಾರೆ. ತಮ್ಮ ಜನರ ಅಧಿಪತಿಗಳ ಸಂಗಡ ಕೂರಿಸುತ್ತಾರೆ.</verse>
				<verse number="9">ಬಂಜೆಯಾದವಳನ್ನು ಮಕ್ಕಳ ಸೌಭಾಗ್ಯದಲ್ಲಿ ಸಂತೋಷಿಸಿ, ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾರೆ. ಯೆಹೋವ ದೇವರನ್ನು ಸ್ತುತಿಸಿರಿ.</verse>
			</chapter>
			<chapter number="114">
				<verse number="1">ಇಸ್ರಾಯೇಲರು ಈಜಿಪ್ಟಿನೊಳಗಿಂದಲೂ, ಯಾಕೋಬನ ಮನೆತನವು ಅನ್ಯಭಾಷೆಯುಳ್ಳ ಜನರೊಳಗಿಂದಲೂ ಹೊರಟುಬಂದಾಗ,</verse>
				<verse number="2">ಯೆಹೂದವು ದೇವರ ಪರಿಶುದ್ಧ ಸ್ಥಳವಾಯಿತು, ಇಸ್ರಾಯೇಲು ದೇವರ ರಾಜ್ಯವಾಯಿತು.</verse>
				<verse number="3">ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ನದಿ ಹಿಂದಿರುಗಿತು.</verse>
				<verse number="4">ಬೆಟ್ಟಗಳು ಟಗರುಗಳಂತೆ ಓಡಿತು, ಗುಡ್ಡಗಳು ಕುರಿಮರಿಗಳಂತೆಯೂ ಓಡಾಡಿದವು.</verse>
				<verse number="5">ಸಮುದ್ರವೇ, ನಿನಗೆ ಏನಾಯಿತು? ಏಕೆ ಓಡಿ ಹೋಗುತ್ತೀ? ಯೊರ್ದನ್ ನದಿಯೇ, ಏಕೆ ಹಿಂದಿರುಗುತ್ತೀ?</verse>
				<verse number="6">ಬೆಟ್ಟಗಳೇ, ಟಗರುಗಳ ಹಾಗೆಯೂ; ಚಿಕ್ಕಗುಡ್ಡಗಳೇ, ನೀವು ಕುರಿಮರಿಗಳ ಹಾಗೆಯೂ ಹಾರಾಡುವುದೇಕೆ?</verse>
				<verse number="7">ಯೆಹೋವ ದೇವರ ಸನ್ನಿಧಿಯಲ್ಲಿಯೂ, ಯಾಕೋಬಿನ ದೇವರ ಮುಂದೆಯೂ ಭೂಮಿಯೇ ನಡುಗು.</verse>
				<verse number="8">ದೇವರು ಬಂಡೆಯನ್ನು ನೀರಿನ ಕೆರೆಯಾಗಿಯೂ, ಕಗ್ಗಲ್ಲನ್ನು ನೀರಿನ ಬುಗ್ಗೆಯಾಗಿ ಮಾರ್ಪಡಿಸುತ್ತಾರೆ.</verse>
			</chapter>
			<chapter number="115">
				<verse number="1">ನಮಗಲ್ಲ ಯೆಹೋವ ದೇವರೇ, ನಮಗಲ್ಲ, ನಿಮ್ಮ ಹೆಸರಿಗೆ ಮಾತ್ರ ಮಹಿಮೆ, ನಿಮ್ಮ ಪ್ರೀತಿ ಮತ್ತು ಸತ್ಯತೆಯ ನಿಮಿತ್ತ ನಿಮಗೆ ಮಹಿಮೆಯಾಗಲಿ.</verse>
				<verse number="2">“ಅವರ ದೇವರು ಎಲ್ಲಿ?” ಎಂದು ಜನಾಂಗಗಳು ಏಕೆ ಹೇಳಬೇಕು?</verse>
				<verse number="3">ನಮ್ಮ ದೇವರು ಪರಲೋಕದಲ್ಲಿದ್ದಾರೆ; ಅವರು ಇಚ್ಛಿಸುವುದನ್ನೆಲ್ಲಾ ಮಾಡುತ್ತಾರೆ.</verse>
				<verse number="4">ಜನರ ವಿಗ್ರಹಗಳು ಬೆಳ್ಳಿ, ಬಂಗಾರದವುಗಳು, ಅವು ಮನುಷ್ಯರ ಕೈಯಿಂದ ಮಾಡಲಾಗಿವೆ.</verse>
				<verse number="5">ಅವುಗಳಿಗೆ ಬಾಯಿಯಿದೆ, ಮಾತನಾಡುವುದಿಲ್ಲ; ಕಣ್ಣುಗಳಿವೆ, ಕಾಣುವುದಿಲ್ಲ.</verse>
				<verse number="6">ಕಿವಿಗಳಿವೆ, ಕೇಳಿಸಿಕೊಳ್ಳುವುದಿಲ್ಲ; ಮೂಗು ಉಂಟು, ಮೂಸುವದಿಲ್ಲ.</verse>
				<verse number="7">ಕೈಗಳುಂಟು, ಮುಟ್ಟುವುದಿಲ್ಲ; ಕಾಲುಗಳುಂಟು, ನಡೆಯುವುದಿಲ್ಲ; ಅವರ ಗಂಟಲಿನಿಂದ ಧ್ವನಿ ಉಚ್ಚರಿಸಲು ಸಾಧ್ಯವಿಲ್ಲ.</verse>
				<verse number="8">ಅವುಗಳನ್ನು ಮಾಡುವವರು ಅವುಗಳಂತೆಯೇ ಇದ್ದಾರೆ; ಅವುಗಳಲ್ಲಿ ಭರವಸವಿಡುವವರು ಅವುಗಳಂತಾಗುವರು.</verse>
				<verse number="9">ಇಸ್ರಾಯೇಲರ ಮನೆಯವರೇ, ಯೆಹೋವ ದೇವರಲ್ಲಿ ಭರವಸೆ ಇಡಿರಿ; ಅವರೇ ನಿಮ್ಮ ಸಹಾಯವೂ, ಗುರಾಣಿಯೂ ಆಗಿದ್ದಾರೆ.</verse>
				<verse number="10">ಆರೋನನ ಮನೆಯವರೇ, ಯೆಹೋವ ದೇವರಲ್ಲಿ ಭರವಸೆ ಇಡಿರಿ; ಅವರೇ ನಿಮ್ಮ ಸಹಾಯವೂ, ಗುರಾಣಿಯೂ ಆಗಿದ್ದಾರೆ.</verse>
				<verse number="11">ಯೆಹೋವ ದೇವರಿಗೆ ಭಯಪಡುವವರೇ, ನೀವು ಯೆಹೋವ ದೇವರಲ್ಲಿಯೇ ಭರವಸೆ ಇಡಿರಿ; ಅವರೇ ನಿಮ್ಮ ಸಹಾಯವೂ ಗುರಾಣಿಯೂ ಆಗಿದ್ದಾರೆ.</verse>
				<verse number="12">ಯೆಹೋವ ದೇವರು ನಮ್ಮನ್ನು ಜ್ಞಾಪಕ ಮಾಡಿಕೊಂಡಿದ್ದಾರೆ, ಅವರು ನಮ್ಮನ್ನು ಆಶೀರ್ವದಿಸುವರು; ಇಸ್ರಾಯೇಲರ ಮನೆಯನ್ನು ಆಶೀರ್ವದಿಸುವರು; ಆರೋನನ ಮನೆಯನ್ನು ಆಶೀರ್ವದಿಸುವರು.</verse>
				<verse number="13">ಯೆಹೋವ ದೇವರಿಗೆ ಭಯ ಪಡುವವರಾದ ಹಿರಿಯರನ್ನೂ ಕಿರಿಯರನ್ನೂ ಬೇಧವಿಲ್ಲದೇ ಆಶೀರ್ವದಿಸುವರು.</verse>
				<verse number="14">ಯೆಹೋವ ದೇವರು ನಿಮ್ಮನ್ನು ಅಭಿವೃದ್ಧಿಪಡಿಸುವರು ನಿಮ್ಮ ಮಕ್ಕಳನ್ನೂ ಅಭಿವೃದ್ಧಿ ಮಾಡುವರು.</verse>
				<verse number="15">ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದ ಯೆಹೋವ ದೇವರಿಂದ ನೀವು ಆಶೀರ್ವಾದ ಹೊಂದಿದವರು.</verse>
				<verse number="16">ಉನ್ನತ ಆಕಾಶಗಳು ಯೆಹೋವ ದೇವರದೇ, ಆದರೆ ಅವರು ಭೂಮಿಯನ್ನು ಮಾನವರಿಗೆ ಕೊಟ್ಟಿದ್ದಾರೆ.</verse>
				<verse number="17">ಸತ್ತವರೂ ಮೌನಲೋಕವನ್ನು ಇಳಿದವರೆಲ್ಲರೂ ಯೆಹೋವ ದೇವರನ್ನು ಸ್ತುತಿಸುವುದಿಲ್ಲ.</verse>
				<verse number="18">ಆದರೆ ನಾವು ಈಗಲೂ ಯುಗಯುಗಕ್ಕೂ ಯೆಹೋವ ದೇವರನ್ನು ಸ್ತುತಿಸುವೆವು. ಯೆಹೋವ ದೇವರನ್ನು ಸ್ತುತಿಸಿರಿ.</verse>
			</chapter>
			<chapter number="116">
				<verse number="1">ನಾನು ಯೆಹೋವ ದೇವರನ್ನು ಪ್ರೀತಿಸುತ್ತೇನೆ; ಏಕೆಂದರೆ ಅವರು ನನ್ನನ್ನು ಕರುಣಿಸಬೇಕೆಂಬ ನನ್ನ ವಿನಂತಿಯನ್ನೂ ಕೇಳಿದ್ದಾರೆ.</verse>
				<verse number="2">ಅವರು ನನ್ನ ಸ್ವರಕ್ಕೆ ಕಿವಿಗೊಟ್ಟಿದ್ದರಿಂದ ನನ್ನ ಜೀವಮಾನಕಾಲವೆಲ್ಲಾ ಅವರನ್ನು ಬೇಡುವೆನು.</verse>
				<verse number="3">ಮರಣದ ಪಾಶಗಳು ನನ್ನನ್ನು ಆವರಿಸಿಕೊಂಡವು; ನರಕದ ಬಾಧೆಗಳು ನನ್ನ ಮೇಲೆ ಬಂದವು; ಇಕ್ಕಟ್ಟೂ ದುಃಖವೂ ನನ್ನನ್ನು ಹಿಡಿದವು.</verse>
				<verse number="4">ಆಗ ನಾನು, “ಓ ಯೆಹೋವ ದೇವರೇ, ನನ್ನನ್ನು ರಕ್ಷಿಸಿರಿ,” ಎಂದು ಯೆಹೋವ ದೇವರ ಹೆಸರಿನಲ್ಲಿ ಬೇಡಿದೆನು.</verse>
				<verse number="5">ಯೆಹೋವ ದೇವರು ಕೃಪೆಯೂ ನೀತಿಯೂ ಉಳ್ಳವರು ನಮ್ಮ ದೇವರು ಅನುಕಂಪ ಭರಿತರು.</verse>
				<verse number="6">ಯೆಹೋವ ದೇವರು ಸರಳ ಹೃದಯದವರನ್ನು ಕಾಪಾಡುತ್ತಾರೆ; ನಾನು ಕೊರತೆಯಲ್ಲಿದ್ದಾಗ, ಅವರು ನನ್ನನ್ನು ರಕ್ಷಿಸಿದರು.</verse>
				<verse number="7">ನನ್ನ ಮನವೇ, ನೀನು ವಿಶ್ರಾಂತಿಯಿಂದಿರು; ಏಕೆಂದರೆ ಯೆಹೋವ ದೇವರು ನಿನಗೆ ಉಪಕಾರಿಯಾಗಿದ್ದಾರೆ.</verse>
				<verse number="8">ಏಕೆಂದರೆ ಯೆಹೋವ ದೇವರೇ, ನೀವು ನನ್ನನ್ನು ಮರಣಕ್ಕೂ, ನನ್ನ ಕಣ್ಣುಗಳನ್ನು ಕಣ್ಣೀರಿಗೂ, ನನ್ನ ಪಾದಗಳನ್ನು ಬೀಳದಂತೆಯೂ ತಪ್ಪಿಸಿದ್ದೀರಿ.</verse>
				<verse number="9">ಆದ್ದರಿಂದ ಜೀವಿತರ ಲೋಕದಲ್ಲಿ ಯೆಹೋವ ದೇವರ ಮುಂದೆ ನಡೆದುಕೊಳ್ಳುವೆನು.</verse>
				<verse number="10">“ನಾನು ಬಹಳ ಕುಗ್ಗಿ ಹೋಗಿದ್ದೇನೆ,” ಎಂದು ನಾನು ದೇವರಲ್ಲಿ ಭರವಸೆ ಇಟ್ಟಾಗ ಹೇಳಿದೆ.</verse>
				<verse number="11">“ಮನುಷ್ಯರೆಲ್ಲರು ಸುಳ್ಳುಗಾರರು,” ಎಂದು ನಾನು ನಿರಾಶೆಯಿಂದ ಹೇಳಿದ್ದೆನು.</verse>
				<verse number="12">ದೇವರು ನನಗೆ ಮಾಡಿದ ಎಲ್ಲಾ ಉಪಕಾರಗಳಿಗೆ ಬದಲಾಗಿ ನಾನು ಯೆಹೋವ ದೇವರಿಗೆ ಏನು ಮಾಡಲಿ?</verse>
				<verse number="13">ನಾನು ರಕ್ಷಣೆಯ ಪಾತ್ರೆಯನ್ನು ತೆಗೆದುಕೊಂಡು, ಯೆಹೋವ ದೇವರ ಹೆಸರನ್ನು ಕರೆಯುವೆನು.</verse>
				<verse number="14">ನಾನು ಹೊತ್ತ ಹರಕೆಗಳನ್ನು ದೇವಜನರೆಲ್ಲರ ಮುಂದೆಯೇ ದೇವರಿಗೆ ಸಲ್ಲಿಸುವೆನು.</verse>
				<verse number="15">ದೇವರ ಭಕ್ತರ ಮರಣವು ಯೆಹೋವ ದೇವರ ದೃಷ್ಟಿಯಲ್ಲಿ ಅಮೂಲ್ಯವಾಗಿದೆ.</verse>
				<verse number="16">ಯೆಹೋವ ದೇವರೇ, ನಿಜವಾಗಿ ನಾನು ನಿಮ್ಮ ಸೇವಕನು; ಹೌದು, ನನ್ನ ತಾಯಿ ನಿಮಗೆ ಸೇವೆಮಾಡಿದಂತೆ ನಾನು ಸಹ ನಿಮ್ಮ ಸೇವಕನು; ನೀವು ನನ್ನ ಬಂಧನಗಳಿಂದ ನನ್ನನ್ನು ಬಿಡಿಸಿದ್ದೀರಿ.</verse>
				<verse number="17">ನಾನು ನಿಮಗೆ ಕೃತಜ್ಞತೆಯ ಬಲಿಯನ್ನು ಅರ್ಪಿಸುವೆನು; ಯೆಹೋವ ದೇವರ ಹೆಸರನ್ನು ಕರೆಯುವೆನು.</verse>
				<verse number="18">ಯೆರೂಸಲೇಮೇ, ನನ್ನ ಹರಕೆಗಳನ್ನು ದೇವಜನರೆಲ್ಲರ ಮುಂದೆಯೇ ಸಲ್ಲಿಸುವೆನು,</verse>
				<verse number="19">ಯೆಹೋವ ದೇವರ ಆಲಯದ ಅಂಗಳಗಳಲ್ಲಿ ಯೆರೂಸಲೇಮ ಮಧ್ಯದಲ್ಲಿಯೇ ಯೆಹೋವ ದೇವರಿಗೆ ಸಲ್ಲಿಸುವೆನು. ಯೆಹೋವ ದೇವರನ್ನು ಸ್ತುತಿಸಿರಿ.</verse>
			</chapter>
			<chapter number="117">
				<verse number="1">ಎಲ್ಲಾ ದೇಶಗಳೇ, ಯೆಹೋವ ದೇವರನ್ನು ಸ್ತುತಿಸಿರಿ; ಸಮಸ್ತ ಜನರೇ, ಯೆಹೋವ ದೇವರನ್ನು ಸ್ತುತಿಸಿರಿ.</verse>
				<verse number="2">ದೇವರ ಪ್ರೀತಿಯು ನಮ್ಮ ಮೇಲೆ ಅಪಾರವಾಗಿದೆ; ಯೆಹೋವ ದೇವರ ಸತ್ಯತೆಯು ಯುಗಯುಗಕ್ಕೂ ಇರುತ್ತದೆ. ಯೆಹೋವ ದೇವರನ್ನು ಸ್ತುತಿಸಿರಿ.</verse>
			</chapter>
			<chapter number="118">
				<verse number="1">ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ; ಅವರು ಒಳ್ಳೆಯವರು. ಅವರ ಪ್ರೀತಿ ಶಾಶ್ವತವಾಗಿರುವುದು.</verse>
				<verse number="2">“ದೇವರ ಪ್ರೀತಿಯು ಯುಗಯುಗಕ್ಕೂ ಇದೆ,” ಎಂದು ಇಸ್ರಾಯೇಲ್ ಹೇಳಲಿ.</verse>
				<verse number="3">“ದೇವರ ಪ್ರೀತಿಯು ಸದಾಕಾಲವೂ ಇರುವುದು,” ಎಂದು ಆರೋನನ ಮನೆಯವರು ಹೇಳಲಿ.</verse>
				<verse number="4">“ದೇವರ ಪ್ರೀತಿಯು ಸದಾಕಾಲವೂ ಇರುವುದು,” ಎಂದು ಯೆಹೋವ ದೇವರಿಗೆ ಭಯಪಡುವವರು ಹೇಳಲಿ.</verse>
				<verse number="5">ಇಕ್ಕಟ್ಟಿನೊಳಗಿಂದ ಯೆಹೋವ ದೇವರಿಗೆ ಕೂಗಿದೆನು; ಯೆಹೋವ ದೇವರು ಉತ್ತರಕೊಟ್ಟು, ನನ್ನನ್ನು ವಿಶಾಲವಾದ ಸ್ಥಳಕ್ಕೆ ತಂದರು.</verse>
				<verse number="6">ಯೆಹೋವ ದೇವರು ನನ್ನ ಪರವಾಗಿದ್ದಾರೆ, ನಾನು ಭಯಪಡೆನು. ಮನುಷ್ಯನು ನನಗೆ ಏನು ಮಾಡಬಲ್ಲನು?</verse>
				<verse number="7">ಯೆಹೋವ ದೇವರು ನನ್ನೊಂದಿಗಿದ್ದಾರೆ, ಅವರು ನನಗೆ ಸಹಾಯಕರು; ನಾನು ವೈರಿಗಳ ಮೇಲೆ ಜಯ ಸಾಧಿಸುವೆನು.</verse>
				<verse number="8">ಮನುಷ್ಯರಲ್ಲಿ ಭರವಸೆ ಇಡುವುದಕ್ಕಿಂತ ಯೆಹೋವ ದೇವರಲ್ಲಿ ಆಶ್ರಯ ಪಡೆಯುವುದು ಒಳ್ಳೆಯದು.</verse>
				<verse number="9">ಅಧಿಪತಿಗಳಲ್ಲಿ ಭರವಸೆ ಇಡುವುದಕ್ಕಿಂತ ಯೆಹೋವ ದೇವರ ಆಶ್ರಯ ಪಡೆಯುವುದು ಒಳ್ಳೆಯದು.</verse>
				<verse number="10">ಎಲ್ಲಾ ರಾಷ್ಟ್ರದವರು ನನ್ನನ್ನು ಸುತ್ತಿಕೊಂಡರು; ಆದರೆ ನಾನು ಯೆಹೋವ ದೇವರ ಹೆಸರಿನಲ್ಲಿ ಅವರನ್ನು ದಂಡಿಸುವೆನು.</verse>
				<verse number="11">ಅವರು ನನ್ನನ್ನು ಎಲ್ಲಾ ದಿಕ್ಕುಗಳಿಂದ ಸುತ್ತಿಕೊಂಡರು; ಯೆಹೋವ ದೇವರ ಹೆಸರಿನಲ್ಲಿ ಅವರನ್ನು ಸೋಲಿಸುವೆನು.</verse>
				<verse number="12">ಜೇನುನೊಣಗಳ ಹಾಗೆ ನನ್ನನ್ನು ಸುತ್ತಿಕೊಂಡರೂ, ಅವರು ಮುಳ್ಳಿನ ಬೆಂಕಿಯ ಹಾಗೆ ಕ್ಷಣಮಾತ್ರದಲ್ಲಿ ಇಲ್ಲವಾಗಿ ಹೋದರು; ಯೆಹೋವ ದೇವರ ಹೆಸರಿನಲ್ಲಿ ನಾನು ಅವರನ್ನು ಸೋಲಿಸುವೆನು.</verse>
				<verse number="13">ನಾನು ಬೀಳುವ ಹಾಗೆ ವೈರಿಯು ನನ್ನನ್ನು ನೂಕಿದನು; ಆದರೆ ಯೆಹೋವ ದೇವರು ನನಗೆ ಸಹಾಯ ಮಾಡಿದರು.</verse>
				<verse number="14">ನನ್ನ ಬಲವೂ, ಬೆಂಬಲವೂ ಯೆಹೋವ ದೇವರೇ; ಅವರೇ ನನಗೆ ರಕ್ಷಣೆಯಾದರು.</verse>
				<verse number="15">ಜಯಘೋಷವೂ ಹರ್ಷಧ್ವನಿಯೂ ನೀತಿವಂತರ ಗುಡಾರಗಳಲ್ಲಿ ಪ್ರತಿಧ್ವನಿಸುತ್ತಿರುವುದು; ಯೆಹೋವ ದೇವರ ಬಲಗೈ ಪರಾಕ್ರಮವನ್ನು ನಡೆಸಿದೆ.</verse>
				<verse number="16">ಯೆಹೋವ ದೇವರ ಬಲಗೈ ಎತ್ತರವಾಗಿ ಎತ್ತಲಾಗಿದೆ; ಯೆಹೋವ ದೇವರ ಬಲಗೈ ಪರಾಕ್ರಮವನ್ನು ನಡೆಸಿದೆ.</verse>
				<verse number="17">ನಾನು ಸಾಯದೆ ಬದುಕಿರುವೆನು, ಯೆಹೋವ ದೇವರು ಮಾಡಿದ್ದನ್ನು ಸಾರುವೆನು.</verse>
				<verse number="18">ಏಕೆಂದರೆ ಯೆಹೋವ ದೇವರು ನನ್ನನ್ನು ಕಠಿಣವಾಗಿ ಶಿಕ್ಷಿಸಿದರು; ಆದರೆ ಮರಣಕ್ಕೆ ನನ್ನನ್ನು ಒಪ್ಪಿಸಲಿಲ್ಲ.</verse>
				<verse number="19">ನೀತಿಯ ಬಾಗಿಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಯೆಹೋವ ದೇವರಿಗೆ ಧನ್ಯವಾದ ಸಲ್ಲಿಸು.</verse>
				<verse number="20">ಇದೇ ಯೆಹೋವ ದೇವರ ಬಾಗಿಲು; ನೀತಿವಂತರು ಇದರಲ್ಲಿ ಪ್ರವೇಶಿಸುವರು.</verse>
				<verse number="21">ನಿಮಗೆ ಕೃತಜ್ಞತಾವಂದನೆ ಸಲ್ಲಿಸುವೆನು; ಏಕೆಂದರೆ ನನಗೆ ನೀವು ಉತ್ತರಕೊಟ್ಟು, ನನಗೆ ರಕ್ಷಣೆಯಾದಿರಿ.</verse>
				<verse number="22">ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.</verse>
				<verse number="23">ಇದು ಯೆಹೋವ ದೇವರಿಂದಲೇ ಉಂಟಾಯಿತು; ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಯಿತು.</verse>
				<verse number="24">ಯೆಹೋವ ದೇವರು ಮಾಡಿದ ದಿನವು ಇದೇ; ಇದರಲ್ಲಿ ನಾವು ಉಲ್ಲಾಸಿಸಿ ಸಂತೋಷಪಡೋಣ.</verse>
				<verse number="25">ಯೆಹೋವ ದೇವರೇ ನಮ್ಮನ್ನು ರಕ್ಷಿಸಿರಿ, ಯೆಹೋವ ದೇವರೇ ನಮಗೆ ಜಯಕೊಡಿರಿ.</verse>
				<verse number="26">ಯೆಹೋವ ದೇವರ ಹೆಸರಿನಲ್ಲಿ ಬರುವವನು ಧನ್ಯನು; ಯೆಹೋವ ದೇವರ ಆಲಯದೊಳಗಿಂದ ನಾವು ನಿಮ್ಮನ್ನು ಆಶೀರ್ವದಿಸುವೆವು.</verse>
				<verse number="27">ಯೆಹೋವ ದೇವರು ದೇವರಾಗಿದ್ದಾನೆ; ನಮ್ಮ ಮೇಲೆ ಅವರ ಬೆಳಕನ್ನು ಪ್ರಕಾಶಿಸುವಂತೆ ಮಾಡಿದ್ದಾರೆ. ಕೊಂಬೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬಲಿಪೀಠದ ಕೊಂಬುಗಳವರೆಗೆ ಮೆರವಣಿಗೆಯಾಗಿ ಬನ್ನಿರಿ.</verse>
				<verse number="28">ನೀವು ನನ್ನ ದೇವರಾಗಿದ್ದೀರಿ, ನಿಮಗೆ ಉಪಕಾರ ಸಲ್ಲಿಸುವೆನು; ನೀವು ನನ್ನ ದೇವರು; ನಿಮ್ಮನ್ನು ನಾನು ಉನ್ನತಪಡಿಸುವೆನು.</verse>
				<verse number="29">ಯೆಹೋವ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ; ಅವರು ಒಳ್ಳೆಯವರು; ಅವರ ಪ್ರೀತಿ ಶಾಶ್ವತವಾಗಿರುವುದು.</verse>
			</chapter>
			<chapter number="119">
				<verse number="1">ಯೆಹೋವ ದೇವರ ನಿಯಮಕ್ಕೆ ಅನುಸಾರವಾಗಿದ್ದು, ದೋಷರಹಿತ ಮಾರ್ಗದಲ್ಲಿ ನಡೆದುಕೊಳ್ಳುವವರೂ ಧನ್ಯರು.</verse>
				<verse number="2">ಸಂಪೂರ್ಣ ಹೃದಯದಿಂದ ದೇವರನ್ನು ಹುಡುಕುತ್ತಾ ಅವರ ಶಾಸನಗಳನ್ನು ಕೈಗೊಳ್ಳುವವರೂ ಧನ್ಯರು</verse>
				<verse number="3">ಅಂಥವರು ಅನ್ಯಾಯವನ್ನು ಮಾಡದೆ, ದೇವರ ಮಾರ್ಗಗಳಲ್ಲಿ ನಡೆದುಕೊಳ್ಳುವರು.</verse>
				<verse number="4">ದೇವರೇ, ನಿಮ್ಮ ಸೂತ್ರಗಳನ್ನು ಪೂರ್ಣವಾಗಿ ಕೈಗೊಳ್ಳಬೇಕೆಂದು ನೀವು ಆಜ್ಞಾಪಿಸಿದ್ದೀರಿ.</verse>
				<verse number="5">ನಿಮ್ಮ ತೀರ್ಪುಗಳನ್ನು ಪಾಲಿಸುವುದರಲ್ಲಿ ನನ್ನ ಮಾರ್ಗಗಳು ಸ್ಥಿರವಾಗಿರಲಿ!</verse>
				<verse number="6">ನಿಮ್ಮ ಎಲ್ಲಾ ಅಪ್ಪಣೆಗಳನ್ನು ಪರಿಗಣಿಸುವಾಗ ನಾನು ನಾಚಿಕೆಗೆ ಗುರಿಯಾಗುವುದಿಲ್ಲ.</verse>
				<verse number="7">ನಾನು ನಿಮ್ಮ ನೀತಿಯುಳ್ಳ ನಿಯಮಗಳನ್ನು ಕಲಿಯುತ್ತಿರುವಾಗೆಲ್ಲಾ, ಯಥಾರ್ಥ ಹೃದಯದಿಂದ ನಿಮ್ಮನ್ನು ಕೊಂಡಾಡುವೆನು.</verse>
				<verse number="8">ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು; ನನ್ನನ್ನು ಸಂಪೂರ್ಣವಾಗಿ ಕೈಬಿಡಬೇಡಿರಿ.</verse>
				<verse number="9">ಯೌವನಸ್ಥನು ಯಾವುದರಿಂದ ತನ್ನ ನಡತೆಯನ್ನು ಶುದ್ಧವಾಗಿಟ್ಟುಕೊಳ್ಳುವನು? ನಿಮ್ಮ ವಾಕ್ಯದ ಪ್ರಕಾರ ಜೀವಿಸುವುದರಿಂದಲೇ.</verse>
				<verse number="10">ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಹುಡುಕಿದ್ದೇನೆ; ನಿಮ್ಮ ಆಜ್ಞೆಗಳಿಂದ ನಾನು ತಪ್ಪಿಹೋಗದಂತೆ ಮಾಡಿರಿ.</verse>
				<verse number="11">ನಿಮಗೆ ವಿರೋಧವಾಗಿ ಪಾಪಮಾಡದ ಹಾಗೆ ನನ್ನ ಹೃದಯದಲ್ಲಿ ನಿಮ್ಮ ವಾಕ್ಯವನ್ನು ಬಚ್ಚಿಟ್ಟುಕೊಂಡಿದ್ದೇನೆ.</verse>
				<verse number="12">ಯೆಹೋವ ದೇವರೇ, ನಿಮಗೆ ಸ್ತುತಿಯುಂಟಾಗಲಿ; ನಿಮ್ಮ ತೀರ್ಪುಗಳನ್ನು ನನಗೆ ಕಲಿಸಿಕೊಡಿರಿ.</verse>
				<verse number="13">ನಿಮ್ಮ ಬಾಯಿಂದ ಬರುವ ನಿಯಮಗಳನ್ನೆಲ್ಲಾ ನನ್ನ ತುಟಿಗಳಿಂದ ನಾನು ವರ್ಣಿಸಿದ್ದೇನೆ.</verse>
				<verse number="14">ಮಹಾ ಸಂಪತ್ತಿನಲ್ಲಿ ಒಬ್ಬ ವ್ಯಕ್ತಿ ಆನಂದಿಸುವ ಹಾಗೆ ನಾನು ನಿಮ್ಮ ಶಾಸನಗಳನ್ನು ಅನುಸರಿಸುವುದರಲ್ಲಿ ಆನಂದಿಸುವೆನು.</verse>
				<verse number="15">ನಿಮ್ಮ ಸೂತ್ರಗಳನ್ನು ಧ್ಯಾನಮಾಡಿ, ನಿಮ್ಮ ಮಾರ್ಗಗಳನ್ನು ದೃಷ್ಟಿಸುವೆನು.</verse>
				<verse number="16">ನಿಮ್ಮ ತೀರ್ಪುಗಳಲ್ಲಿ ಉಲ್ಲಾಸಗೊಂಡು, ನಿಮ್ಮ ವಾಕ್ಯವನ್ನು ತಿರಸ್ಕರಿಸದಿರುವೆನು.</verse>
				<verse number="17">ನಾನು ಜೀವದಿಂದಿದ್ದು ನಿಮ್ಮ ವಾಕ್ಯವನ್ನು ಕೈಗೊಳ್ಳುವಂತೆ ನಿಮ್ಮ ಸೇವಕನ ಮೇಲೆ ದಯೆಯಿಡಿರಿ.</verse>
				<verse number="18">ನಿಮ್ಮ ನಿಯಮದೊಳಗಿನ ಅದ್ಭುತಗಳನ್ನು ಕಾಣುವಂತೆ ನನ್ನ ಕಣ್ಣುಗಳನ್ನು ತೆರೆಯಿರಿ.</verse>
				<verse number="19">ಈ ಭೂಮಿಯಲ್ಲಿ ನಾನೊಬ್ಬ ಪ್ರವಾಸಿಯಾಗಿದ್ದೇನೆ; ನಿಮ್ಮ ಆಜ್ಞೆಗಳನ್ನು ನನಗೆ ಮರೆಮಾಡಬೇಡಿರಿ.</verse>
				<verse number="20">ನಿಮ್ಮ ನಿಯಮಗಳನ್ನು ಯಾವಾಗಲೂ ಹಂಬಲಿಸುತ್ತಿರುವುದರಿಂದ, ನನ್ನ ಪ್ರಾಣವು ಕರಗಿಹೋಗುತ್ತಿದೆ.</verse>
				<verse number="21">ನಿಮ್ಮ ಆಜ್ಞೆಗಳನ್ನು ಅನುಸರಿಸದೆ ತಪ್ಪಿಹೋಗುವ ಶಾಪಗ್ರಸ್ತರಾದ ಗರ್ವಿಷ್ಠರನ್ನು ನೀವು ಗದರಿಸುತ್ತೀರಿ.</verse>
				<verse number="22">ನಾನು ನಿಮ್ಮ ಶಾಸನಗಳನ್ನು ಕೈಗೊಂಡ ಕಾರಣ, ಗರ್ವಿಷ್ಠರ ನಿಂದೆಯನ್ನೂ, ತಿರಸ್ಕಾರವನ್ನೂ ನನ್ನಿಂದ ತೊಲಗಿಸಿರಿ.</verse>
				<verse number="23">ಅಧಿಕಾರಿಗಳು ನನಗೆ ವಿರೋಧವಾಗಿ ಕುಳಿತುಕೊಂಡು ಮಾತನಾಡಿಕೊಂಡರೂ, ನಿಮ್ಮ ಸೇವಕನು ನಿಮ್ಮ ತೀರ್ಪುಗಳನ್ನೇ ಧ್ಯಾನಿಸುತ್ತಿರುವೆನು.</verse>
				<verse number="24">ನಿಮ್ಮ ಶಾಸನಗಳು ನನಗೆ ಉಲ್ಲಾಸಕರವಾಗಿವೆ; ಅವೇ ನನ್ನ ಸಮಾಲೋಚಕರು.</verse>
				<verse number="25">ನಾನು ಧೂಳಿನಲ್ಲಿ ಬಿದ್ದಿದ್ದೇನೆ; ನಿಮ್ಮ ವಾಕ್ಯದ ಪ್ರಕಾರ ನನ್ನನ್ನು ಉಜ್ಜೀವಿಸಿರಿ.</verse>
				<verse number="26">ನಾನು ನನ್ನ ಮಾರ್ಗಗಳನ್ನು ಲೆಕ್ಕ ಒಪ್ಪಿಸಲು, ನೀವು ನನಗೆ ಸದುತ್ತರವನ್ನು ಕೊಟ್ಟಿರುವಿರಿ; ನಿಮ್ಮ ತೀರ್ಪುಗಳನ್ನು ನನಗೆ ಕಲಿಸಿಕೊಡಿರಿ.</verse>
				<verse number="27">ನಿಮ್ಮ ಸೂತ್ರಗಳ ಮಾರ್ಗವನ್ನು ನಾನು ಅರ್ಥಮಾಡಿಕೊಳ್ಳಲು ಸಹಾಯಿಸಿರಿ, ಆಗ ನಿಮ್ಮ ಅದ್ಭುತಕಾರ್ಯಗಳನ್ನು ಧ್ಯಾನ ಮಾಡುವೆನು.</verse>
				<verse number="28">ನನ್ನ ಪ್ರಾಣವು ದುಃಖದಿಂದ ಬಲಹೀನವಾಗಿದೆ; ನಿಮ್ಮ ವಾಕ್ಯದಿಂದ ನನ್ನನ್ನು ಬಲಪಡಿಸಿರಿ.</verse>
				<verse number="29">ವಂಚನೆಯುಳ್ಳ ಮಾರ್ಗದಿಂದ ನನ್ನನ್ನು ಕಾಪಾಡಿರಿ; ನನಗೆ ಕೃಪೆ ನೀಡಿ ನಿಮ್ಮ ನಿಯಮವನ್ನು ನನಗೆ ಬೋಧನೆ ಮಾಡಿರಿ.</verse>
				<verse number="30">ನಂಬಿಗಸ್ತಿಕೆಯ ಮಾರ್ಗವನ್ನು ಆರಿಸಿಕೊಂಡಿದ್ದೇನೆ; ನಾನು ನಿಮ್ಮ ನಿಯಮಗಳ ಮೇಲೆ ನನ್ನ ಹೃದಯವನ್ನಿಟ್ಟುಕೊಂಡಿದ್ದೇನೆ.</verse>
				<verse number="31">ಯೆಹೋವ ದೇವರೇ, ನಾನು ನಿಮ್ಮ ಶಾಸನಗಳನ್ನು ಬಿಗಿಯಾಗಿಟ್ಟುಕೊಂಡಿದ್ದೇನೆ; ನನ್ನನ್ನು ನಾಚಿಕೆಗೆ ಗುರಿಪಡಿಸಬೇಡಿರಿ.</verse>
				<verse number="32">ನಿಮ್ಮ ಆಜ್ಞೆಗಳ ಮಾರ್ಗದಲ್ಲಿ ಓಡುವೆನು, ಏಕೆಂದರೆ ನೀವು ನನ್ನ ವಿವೇಕವನ್ನು ವಿಸ್ತಾರ ಮಾಡಿದ್ದೀರಿ.</verse>
				<verse number="33">ಯೆಹೋವ ದೇವರೇ, ನಿಮ್ಮ ತೀರ್ಪುಗಳ ವಿವರವನ್ನು ನನಗೆ ಬೋಧಿಸಿರಿ; ಆಗ ನಾನು ಅವುಗಳನ್ನು ಅಂತ್ಯದವರೆಗೂ ಹಿಂಬಾಲಿಸುವೆನು.</verse>
				<verse number="34">ನಿಮ್ಮ ನಿಯಮವನ್ನು ಹಿಂಬಾಲಿಸಿ, ಅದನ್ನು ಪೂರ್ಣಹೃದಯದಿಂದ ಕೈಕೊಳ್ಳಲು ನನಗೆ ವಿವೇಚನೆಯನ್ನು ನೀಡಿರಿ.</verse>
				<verse number="35">ನಿಮ್ಮ ಆಜ್ಞೆಗಳ ಮಾರ್ಗದಲ್ಲಿ ನನ್ನನ್ನು ನಡೆಸಿರಿ, ಏಕೆಂದರೆ ನಾನು ಅದರಲ್ಲಿ ಆನಂದಿಸುತ್ತೇನೆ.</verse>
				<verse number="36">ಸ್ವಾರ್ಥದ ಲಾಭಗಳ ಕಡೆಗಲ್ಲ, ಆದರೆ ನಿಮ್ಮ ಶಾಸನಗಳ ಕಡೆಗೆ ನನ್ನ ಹೃದಯವನ್ನು ತಿರುಗಿಸಿರಿ.</verse>
				<verse number="37">ವ್ಯರ್ಥವಾದವುಗಳಿಂದ ನನ್ನ ಕಣ್ಣುಗಳನ್ನು ತಿರುಗಿಸಿ, ನಿಮ್ಮ ವಾಕ್ಯದ ಅನುಸಾರವಾಗಿ ನನ್ನ ಜೀವವನ್ನು ಕಾಪಾಡಿರಿ.</verse>
				<verse number="38">ನಿಮಗೆ ಭಯಪಡುವವರಿಗಾಗಿ ನೀಡುವ ವಾಗ್ದಾನವನ್ನು ನಿಮ್ಮ ಸೇವಕನಿಗೆ ನೆರವೇರಿಸಿರಿ.</verse>
				<verse number="39">ನಾನು ಭಯಪಡುವ ನನ್ನ ನಿಂದೆಯನ್ನು ನನ್ನಿಂದ ತೊಲಗಿಸಿರಿ, ಏಕೆಂದರೆ ನಿಮ್ಮ ನಿಯಮಗಳು ಒಳ್ಳೆಯವುಗಳೇ.</verse>
				<verse number="40">ಇಗೋ ನಿಮ್ಮ ಸೂತ್ರಗಳಿಗಾಗಿ ನಾನು ಎಷ್ಟೋ ಹಂಬಲಿಸುತ್ತೇನೆ! ನಿಮ್ಮ ನೀತಿಗನುಸಾರವಾಗಿ ನನ್ನ ಜೀವವನ್ನು ಕಾಪಾಡಿರಿ.</verse>
				<verse number="41">ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ನನಗೆ ದೊರಕಲಿ, ನಿಮ್ಮ ವಾಗ್ದಾನದ ರಕ್ಷಣೆಯು ನನಗೆ ಉಂಟಾಗಲಿ;</verse>
				<verse number="42">ಆಗ ನನ್ನನ್ನು ನಿಂದಿಸುವವನಿಗೆ ಉತ್ತರಕೊಡುವೆನು, ಏಕೆಂದರೆ ನಾನು ನಿಮ್ಮ ವಾಕ್ಯದಲ್ಲಿ ಭರವಸೆಯಿಟ್ಟಿದ್ದೇನೆ.</verse>
				<verse number="43">ಸತ್ಯವಾಕ್ಯವನ್ನು ನನ್ನ ಬಾಯಿಂದ ತೆಗೆಯಬೇಡಿರಿ, ಏಕೆಂದರೆ ನಿಮ್ಮ ನಿಯಮಗಳಲ್ಲಿ ನಾನು ನನ್ನ ನಿರೀಕ್ಷೆಯನ್ನಿಟ್ಟಿದ್ದೇನೆ.</verse>
				<verse number="44">ನಾನು ನಿಮ್ಮ ನಿಯಮವನ್ನು ಯಾವಾಗಲೂ ಮತ್ತು ಎಂದೆಂದಿಗೂ ಪಾಲಿಸುವೆನು.</verse>
				<verse number="45">ನಿಮ್ಮ ಸೂತ್ರಗಳನ್ನು ನಾನು ಹುಡುಕುವುದರಿಂದ, ನಾನು ಸ್ವತಂತ್ರವಾಗಿಯೇ ಜೀವಿಸುವೆನು.</verse>
				<verse number="46">ಅರಸರ ಮುಂದೆ ನಿಮ್ಮ ಶಾಸನಗಳನ್ನು ಮಾತಾಡುವೆನು, ಅವುಗಳ ಬಗ್ಗೆ ನಾನೆಂದೂ ನಾಚಿಕೆಪಡುವುದಿಲ್ಲ.</verse>
				<verse number="47">ನಿಮ್ಮ ಆಜ್ಞೆಗಳನ್ನು ನಾನು ಪ್ರೀತಿಸುವುದರಿಂದ, ನಾನು ಅವುಗಳಲ್ಲಿ ಆನಂದಿಸುವೆನು.</verse>
				<verse number="48">ನಾನು ಪ್ರೀತಿಸುವ ನಿಮ್ಮ ಆಜ್ಞೆಗಳ ಕಡೆಗೆ ನನ್ನ ಕೈಗಳನ್ನೆತ್ತಿ, ನಿಮ್ಮ ತೀರ್ಪುಗಳನ್ನು ಧ್ಯಾನ ಮಾಡುವೆನು.</verse>
				<verse number="49">ನಿಮ್ಮ ಸೇವಕನಿಗೋಸ್ಕರ ನಿಮ್ಮ ವಾಕ್ಯವನ್ನು ನೀವು ಜ್ಞಾಪಕಮಾಡಿಕೊಳ್ಳಿರಿ, ಏಕೆಂದರೆ ನೀವು ನನಗೆ ನಿರೀಕ್ಷೆಯನ್ನು ಕೊಟ್ಟಿದ್ದೀರಿ.</verse>
				<verse number="50">ನಿಮ್ಮ ವಾಗ್ದಾನವು ನನ್ನ ಜೀವದ ಸಂರಕ್ಷಣೆಯಾಗಿದೆ. ಅವು ನನ್ನ ಸಂಕಷ್ಟಗಳಲ್ಲಿ ಆದರಣೆಯಾಗಿವೆ.</verse>
				<verse number="51">ಅಹಂಕಾರಿಗಳು ನನ್ನನ್ನು ಕರುಣಿಸದೆ ಹಾಸ್ಯ ಮಾಡಿದರೂ, ನಾನು ನಿಮ್ಮ ನಿಯಮದಿಂದ ತೊಲಗುವುದಿಲ್ಲ.</verse>
				<verse number="52">ಯೆಹೋವ ದೇವರೇ, ನಿಮ್ಮ ಪುರಾತನ ನಿಯಮಗಳನ್ನು ನಾನು ನೆನಪು ಮಾಡಿಕೊಂಡು, ಅವುಗಳಲ್ಲಿ ಆದರಣೆಯನ್ನು ಪಡೆದುಕೊಂಡಿದ್ದೇನೆ.</verse>
				<verse number="53">ನಿಮ್ಮ ನಿಯಮವನ್ನು ಬಿಟ್ಟುಬಿಡುವ ದುಷ್ಟರ ನಿಮಿತ್ತ, ರೋಷವು ನನ್ನನ್ನು ಆವರಿಸಿಕೊಂಡಿದೆ.</verse>
				<verse number="54">ನನ್ನ ಪ್ರವಾಸದ ಮನೆಯಲ್ಲಿ ನಿಮ್ಮ ತೀರ್ಪುಗಳು ನನಗೆ ಗಾನ ವಿಷಯವಾಗಿದೆ.</verse>
				<verse number="55">ಯೆಹೋವ ದೇವರೇ, ರಾತ್ರಿಯಲ್ಲಿ ನಿಮ್ಮ ನಾಮಸ್ಮರಣೆ ಮಾಡುವುದರಿಂದ, ನಿಮ್ಮ ನಿಯಮವನ್ನು ಕೈಕೊಳ್ಳುತ್ತೇನೆ.</verse>
				<verse number="56">ನಾನು ನಿಮ್ಮ ಸೂತ್ರಗಳನ್ನು ಕೈಗೊಂಡಿದ್ದೇನೆ: ಇದೇ ನನ್ನ ಜೀವನದ ಶೈಲಿಯಾಗಿದೆ.</verse>
				<verse number="57">ಯೆಹೋವ ದೇವರೇ, ನೀವೇ ನನ್ನ ಪಾಲು; ನಿಮ್ಮ ವಾಕ್ಯಗಳನ್ನು ಪಾಲಿಸುವೆನೆಂದು ನಾನು ಪ್ರಮಾಣ ಮಾಡಿದ್ದೇನೆ.</verse>
				<verse number="58">ಪೂರ್ಣಹೃದಯದಿಂದ ನಾನು ನಿಮ್ಮ ಮುಖವನ್ನು ಹುಡುಕಿದ್ದೇನೆ; ನಿಮ್ಮ ವಾಕ್ಯದ ಪ್ರಕಾರ ನನ್ನನ್ನು ಕರುಣಿಸಿರಿ.</verse>
				<verse number="59">ನಾನು ನನ್ನ ನಡತೆಯನ್ನು ಪರಿಶೋಧಿಸುತ್ತಾ ನನ್ನ ಹೆಜ್ಜೆಗಳನ್ನು ನಿಮ್ಮ ಶಾಸನಗಳ ಕಡೆಗೆ ತಿರುಗಿಸಿದ್ದೇನೆ.</verse>
				<verse number="60">ನಿಮ್ಮ ಆಜ್ಞೆಗಳನ್ನು ಪಾಲಿಸಲು ನಾನು ತಡಮಾಡದೆ ತ್ವರೆಪಟ್ಟಿದ್ದೇನೆ.</verse>
				<verse number="61">ದುಷ್ಟರ ಪಾಶಗಳು ನನ್ನನ್ನು ಸುತ್ತಿಕೊಂಡಿದ್ದರೂ, ನಿಮ್ಮ ನಿಯಮವನ್ನು ನಾನು ಮರೆಯಲಿಲ್ಲ.</verse>
				<verse number="62">ನಿಮ್ಮ ನೀತಿಯುಳ್ಳ ನಿಯಮಗಳಿಗಾಗಿ ನಿಮಗೆ ಕೃತಜ್ಞತೆ ಸಲ್ಲಿಸಲು ಮಧ್ಯರಾತ್ರಿಯಲ್ಲಿ ಏಳುವೆನು.</verse>
				<verse number="63">ನಿಮಗೆ ಭಯಪಡುವವರೆಲ್ಲರಿಗೂ, ನಿಮ್ಮ ಸೂತ್ರಗಳನ್ನು ಹಿಂಬಾಲಿಸುವವರಿಗೂ ನಾನು ಮಿತ್ರನಾಗಿದ್ದೇನೆ.</verse>
				<verse number="64">ಯೆಹೋವ ದೇವರೇ, ಭೂಮಿಯು ನಿಮ್ಮ ಪ್ರೀತಿಯಿಂದ ತುಂಬಿದೆ; ನಿಮ್ಮ ತೀರ್ಪುಗಳನ್ನು ನನಗೆ ಬೋಧಿಸಿರಿ.</verse>
				<verse number="65">ಯೆಹೋವ ದೇವರೇ, ನಿಮ್ಮ ವಾಕ್ಯದ ಪ್ರಕಾರ ನಿಮ್ಮ ಸೇವಕನಿಗೆ ಒಳ್ಳೆಯದನ್ನು ಮಾಡಿರಿ.</verse>
				<verse number="66">ತಿಳುವಳಿಕೆಯನ್ನೂ ಒಳ್ಳೆಯ ವಿವೇಚನೆಯನ್ನೂ, ನನಗೆ ಕಲಿಸಿರಿ, ಏಕೆಂದರೆ ನಿಮ್ಮ ಆಜ್ಞೆಗಳಲ್ಲಿ ಭರವಸೆ ಇಟ್ಟಿದ್ದೇನೆ.</verse>
				<verse number="67">ನಾನು ಬಾಧೆಪಡುವುದಕ್ಕಿಂತ ಮುಂಚೆ ದಾರಿತಪ್ಪಿಹೋಗುತ್ತಿದ್ದೆನು, ಆದರೆ ಈಗ ನಿಮ್ಮ ವಾಕ್ಯವನ್ನು ಪಾಲಿಸುತ್ತಿದ್ದೇನೆ.</verse>
				<verse number="68">ನೀವು ಒಳ್ಳೆಯವರೂ, ಒಳ್ಳೆಯದನ್ನು ಮಾಡುವವರೂ ಆಗಿದ್ದೀರಿ; ನಿಮ್ಮ ತೀರ್ಪುಗಳನ್ನು ನನಗೆ ಕಲಿಸಿರಿ.</verse>
				<verse number="69">ಅಹಂಕಾರಿಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು, ನಾನಾದರೋ ಪೂರ್ಣಹೃದಯದಿಂದ ನಿಮ್ಮ ಸೂತ್ರಗಳನ್ನು ಕೈಗೊಳ್ಳುವೆನು.</verse>
				<verse number="70">ಅವರ ಹೃದಯವು ಕಠಿಣವೂ ಮಂದವೂ ಆಗಿದೆ, ನಾನಾದರೋ ನಿಮ್ಮ ನಿಯಮದಲ್ಲಿ ಆನಂದಪಡುತ್ತೇನೆ.</verse>
				<verse number="71">ನಾನು ಶ್ರಮೆಪಟ್ಟದ್ದು ನನಗೆ ಒಳ್ಳೆಯದಾಯಿತು ಅದರಿಂದ ನಿಮ್ಮ ತೀರ್ಪುಗಳನ್ನು ಕಲಿತೆನು.</verse>
				<verse number="72">ಸಾವಿರಾರು ಬೆಳ್ಳಿಬಂಗಾರ ನಾಣ್ಯಗಳಿಗಿಂತಲೂ ನಿಮ್ಮ ಬಾಯಿಯ ನಿಯಮವು ನನಗೆ ಹೆಚ್ಚು ಅಮೂಲ್ಯವಾದದ್ದಾಗಿದೆ.</verse>
				<verse number="73">ನಿಮ್ಮ ಕೈಗಳು ನನ್ನನ್ನು ನಿರ್ಮಿಸಿ ರೂಪಿಸಿದವು; ನಿಮ್ಮ ಆಜ್ಞೆಗಳನ್ನು ಕಲಿತುಕೊಳ್ಳಲು ನನಗೆ ಅರಿವನ್ನು ನೀಡಿರಿ.</verse>
				<verse number="74">ನಿಮಗೆ ಭಯಪಡುವವರು ನನ್ನನ್ನು ನೋಡಿ ಆನಂದಿಸಲಿ, ಏಕೆಂದರೆ ನಾನು ನಿಮ್ಮ ವಾಕ್ಯದಲ್ಲಿ ನಿರೀಕ್ಷಿಸಿಕೊಂಡಿದ್ದೇನೆ.</verse>
				<verse number="75">ಯೆಹೋವ ದೇವರೇ, ನಿಮ್ಮ ನಿಯಮಗಳು ನೀತಿಯುಳ್ಳವುಗಳು; ನಿಮ್ಮ ನಂಬಿಗಸ್ತಿಕೆಯಿಂದಲೇ ನೀವು ನನ್ನನ್ನು ಕಷ್ಟಪಡಿಸಿದ್ದೀರಿ ಎಂದು ನನಗೆ ಗೊತ್ತಿದೆ.</verse>
				<verse number="76">ನೀವು ನಿಮ್ಮ ಸೇವಕನಿಗೆ ನೀಡಿದ ವಾಗ್ದಾನದ ಪ್ರಕಾರ, ನಿಮ್ಮ ಒಡಂಬಡಿಕೆಯ ಪ್ರೀತಿಯು ನನಗೆ ಆದರಣೆಯಾಗಿರಲಿ.</verse>
				<verse number="77">ನಾನು ಜೀವಿಸುವಂತೆ ನಿಮ್ಮ ಅನುಕಂಪವು ನನಗೆ ಬರಲಿ, ಏಕೆಂದರೆ ನಿಮ್ಮ ನಿಯಮವೇ ನನ್ನ ಆನಂದವಾಗಿದೆ.</verse>
				<verse number="78">ಅಹಂಕಾರಿಗಳು ಕಾರಣವಿಲ್ಲದೆ ನನಗೆ ಕೇಡು ಮಾಡಿದ್ದರಿಂದ ನಾಚಿಕೆಪಡಲಿ; ಆದರೆ ನಾನು ನಿಮ್ಮ ಸೂತ್ರಗಳನ್ನು ಧ್ಯಾನಿಸುತ್ತಿರುವೆನು.</verse>
				<verse number="79">ನಿಮಗೆ ಭಯಪಡುವವರು ನನ್ನ ಬಳಿಗೆ ಬರಲಿ, ನಿಮ್ಮ ಶಾಸನಗಳನ್ನು ಅರ್ಥಮಾಡಿಕೊಳ್ಳುವವರೂ ನನ್ನ ಬಳಿಗೆ ಬರಲಿ.</verse>
				<verse number="80">ನಿಷ್ಕಳಂಕ ಹೃದಯದಿಂದ ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು, ಅದರಿಂದ ನಾನು ನಾಚಿಕೆಗೆ ಗುರಿಯಾಗದಿರುವೆನು.</verse>
				<verse number="81">ನನ್ನ ಪ್ರಾಣವು ನಿಮ್ಮ ರಕ್ಷಣೆಯ ಬಯಕೆಯಿಂದಲೇ ಕುಗ್ಗಿ ಹೋಗುತ್ತಿದೆ, ಆದರೂ ನಾನು ನಿಮ್ಮ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.</verse>
				<verse number="82">ನನ್ನ ಕಣ್ಣುಗಳು ನಿಮ್ಮ ವಾಗ್ದಾನಕ್ಕಾಗಿ ಕಾಯುತ್ತಾ ಮಂದವಾಗುತ್ತಿವೆ; “ನೀವು ಯಾವಾಗ ನನಗೆ ಆದರಣೆ ನೀಡುವಿರಿ?” ಎಂದು ನಾನು ಕೇಳುತ್ತಿರುವೆನು.</verse>
				<verse number="83">ನಾನು ಹೊಗೆಯಲ್ಲಿರುವ ದ್ರಾಕ್ಷಾರಸದ ಚರ್ಮಚೀಲದಂತ್ತಿದ್ದರೂ, ನಿಮ್ಮ ತೀರ್ಪುಗಳನ್ನು ನಾನು ಮರೆಯಲಿಲ್ಲ.</verse>
				<verse number="84">ಎಷ್ಟು ಕಾಲ ನಿಮ್ಮ ಸೇವಕನು ಕಾಯಬೇಕು? ನನ್ನ ಹಿಂಸಕರಿಗೆ ಯಾವಾಗ ನೀವು ಶಿಕ್ಷಿಸುವಿರಿ?</verse>
				<verse number="85">ನಿಮ್ಮ ನಿಯಮಕ್ಕೆ ವಿರೋಧವಾಗಿ ಅಹಂಕಾರಿಗಳು ನನಗೆ ಬಲೆಹಿಡಿಯಲು ಕುಣಿಗಳನ್ನು ಅಗೆದಿದ್ದಾರೆ.</verse>
				<verse number="86">ನಿಮ್ಮ ಆಜ್ಞೆಗಳೆಲ್ಲಾ ಭರವಸೆಗೆ ಯೋಗ್ಯವಾದವುಗಳೇ; ಕಾರಣವಿಲ್ಲದೆ ಜನರು ನನ್ನನ್ನು ಹಿಂಸಿಸುವುದರಿಂದ ನನಗೆ ಸಹಾಯಮಾಡಿರಿ.</verse>
				<verse number="87">ಅವರು ನನ್ನನ್ನು ಬಹುಮಟ್ಟಿಗೆ ಭೂಮಿಯಿಂದ ಅಳಿಸಿಹಾಕಲು ನೋಡಿದರು, ಆದರೆ ನಾನು ನಿಮ್ಮ ಸೂತ್ರಗಳನ್ನು ತಿರಸ್ಕರಿಸಲಿಲ್ಲ.</verse>
				<verse number="88">ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನನ್ನ ಜೀವನವನ್ನು ಪರಿಪಾಲಿಸಿರಿ, ಆಗ ನಿಮ್ಮ ಬಾಯಿಂದ ಹೊರಡುವ ಶಾಸನಗಳನ್ನು ಪಾಲಿಸುವೆನು.</verse>
				<verse number="89">ಯೆಹೋವ ದೇವರೇ, ನಿಮ್ಮ ವಾಕ್ಯವು ಶಾಶ್ವತವಾಗಿದೆ; ಅದು ಪರಲೋಕದಲ್ಲಿ ಸ್ಥಿರವಾಗಿದೆ.</verse>
				<verse number="90">ನಿಮ್ಮ ನಂಬಿಗಸ್ತಿಕೆಯು ಎಲ್ಲಾ ತಲೆಮಾರಿಗೂ ಮುಂದುವರಿಯುವುದು; ನೀವು ಸ್ಥಾಪಿಸಿದ ಭೂಮಿಯು ನೆಲೆಯಾಗಿರುವುದು.</verse>
				<verse number="91">ನಿಮ್ಮ ನಿಯಮಗಳು ಇಂದಿನವರೆಗೂ ನಿಂತಿರುತ್ತವೆ, ಏಕೆಂದರೆ ಸೃಷ್ಟಿಗಳೆಲ್ಲವೂ ನಿಮ್ಮ ಸೇವೆಯನ್ನು ಮಾಡುತ್ತವೆ.</verse>
				<verse number="92">ನಿಮ್ಮ ನಿಯಮವು ನನಗೆ ಆನಂದವಾಗಿರದಿದ್ದರೆ, ನನ್ನ ಕಷ್ಟದಲ್ಲಿ ನಾನು ನಾಶವಾಗುತ್ತಿದ್ದೆನು.</verse>
				<verse number="93">ನಿಮ್ಮ ಸೂತ್ರಗಳನ್ನು ನಾನು ಎಂದಿಗೂ ಮರೆಯುವುದಿಲ್ಲ, ಏಕೆಂದರೆ ಅವುಗಳಿಂದ ನನ್ನ ಜೀವವನ್ನು ಪರಿಪಾಲಿಸಿದ್ದೀರಿ.</verse>
				<verse number="94">ನನ್ನನ್ನು ರಕ್ಷಿಸಿರಿ, ಏಕೆಂದರೆ ನಾನು ನಿಮ್ಮವನೇ; ನಿಮ್ಮ ಸೂತ್ರಗಳನ್ನು ನಾನು ಹುಡುಕಿದ್ದೇನಲ್ಲಾ.</verse>
				<verse number="95">ದುಷ್ಟರು ನನ್ನನ್ನು ನಾಶಮಾಡುವುದಕ್ಕೆ ನನಗಾಗಿ ಕಾಯುತ್ತಿದ್ದಾರೆ, ನಾನಾದರೋ ನಿಮ್ಮ ಶಾಸನಗಳನ್ನು ಆಲೋಚಿಸುತ್ತಿರುವೆನು.</verse>
				<verse number="96">ಸರ್ವ ಸಂಪೂರ್ಣತೆಗೂ ಒಂದು ಮಿತಿಯಿರುವುದನ್ನು ನಾನು ನೋಡಿದ್ದೇನೆ; ಆದರೆ ನಿಮ್ಮ ಆಜ್ಞೆಗಳು ಮಿತಿಯಿಲ್ಲದವುಗಳಾಗಿವೆ.</verse>
				<verse number="97">ನಿಮ್ಮ ನಿಯಮವನ್ನು ನಾನು ಎಷ್ಟೋ ಪ್ರೀತಿಮಾಡುತ್ತೇನೆ! ದಿನವೆಲ್ಲಾ ಅದನ್ನೇ ಧ್ಯಾನಿಸುತ್ತೇನೆ.</verse>
				<verse number="98">ನಿಮ್ಮ ಆಜ್ಞೆಗಳು ಯಾವಾಗಲೂ ನನ್ನೊಂದಿಗೆ ಇರುವುದರಿಂದ ಅವು ನನ್ನನ್ನು ನನ್ನ ಶತ್ರುಗಳಿಗಿಂತ ಜ್ಞಾನಿಯಾಗಿ ಮಾಡಿವೆ.</verse>
				<verse number="99">ನನ್ನ ಒಳನೋಟ ನನ್ನ ಬೋಧಕರೆಲ್ಲರಿಗಿಂತ ದೊಡ್ಡದಾಗಿದೆ. ಏಕೆಂದರೆ ನಿಮ್ಮ ಶಾಸನಗಳು ನನ್ನ ಧ್ಯಾನವಾಗಿವೆ.</verse>
				<verse number="100">ನಿಮ್ಮ ಸೂತ್ರಗಳನ್ನು ಕೈಗೊಂಡಿರುವುದರಿಂದ ನಾನು ಹಿರಿಯರಿಗಿಂತಲೂ ವಿವೇಕಿಯಾಗಿದ್ದೇನೆ.</verse>
				<verse number="101">ನಿಮ್ಮ ವಾಕ್ಯವನ್ನು ಅನುಸರಿಸಬೇಕೆಂದು, ನಾನು ಪ್ರತಿಯೊಂದು ದುರ್ಮಾರ್ಗದಿಂದ ನನ್ನ ಹೆಜ್ಜೆಗಳನ್ನು ಹಿಂದೆಗೆದಿದ್ದೇನೆ.</verse>
				<verse number="102">ನಿಮ್ಮ ನಿಯಮಗಳಿಂದ ನಾನು ತಪ್ಪಿಹೋಗಲಿಲ್ಲ, ಏಕೆಂದರೆ ನೀವೇ ನನಗೆ ಉಪದೇಶಿಸಿದ್ದೀರಿ.</verse>
				<verse number="103">ನಿಮ್ಮ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿಯಾಗಿವೆ! ಅವು ನನ್ನ ಬಾಯಿಗೆ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ!</verse>
				<verse number="104">ನಾನು ನಿಮ್ಮ ಸೂತ್ರಗಳಿಂದ ತಿಳುವಳಿಕೆಯನ್ನು ಸಂಪಾದಿಸಿಕೊಂಡಿದ್ದೇನೆ; ಆದ್ದರಿಂದ ಪ್ರತಿಯೊಂದು ದುರ್ಮಾರ್ಗವನ್ನೂ ದ್ವೇಷಿಸುತ್ತೇನೆ.</verse>
				<verse number="105">ನಿಮ್ಮ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.</verse>
				<verse number="106">ನಿಮ್ಮ ನೀತಿಯ ನಿಯಮಗಳನ್ನು ಪಾಲಿಸುವೆನೆಂದು ನಾನು ಒಂದು ಶಪಥಮಾಡಿದ್ದೇನೆ; ಅದನ್ನು ನಾನು ದೃಢಪಡಿಸುವೆನು.</verse>
				<verse number="107">ನಾನು ಬಹಳ ಕಷ್ಟ ಅನುಭವಿಸಿದ್ದೇನೆ; ಯೆಹೋವ ದೇವರೇ, ನಿಮ್ಮ ವಾಕ್ಯದ ಅನುಸಾರವಾಗಿ ನನ್ನ ಜೀವನವನ್ನು ಕಾಪಾಡಿರಿ.</verse>
				<verse number="108">ಯೆಹೋವ ದೇವರೇ, ನನ್ನ ಬಾಯಿಂದ ಸಿದ್ಧಮನಸ್ಸಿನ ಸ್ತೋತ್ರಗಳನ್ನು ಸ್ವೀಕರಿಸಿರಿ, ನಿಮ್ಮ ನಿಯಮಗಳನ್ನು ನನಗೆ ಬೋಧಿಸಿರಿ.</verse>
				<verse number="109">ನನ್ನ ಜೀವನ ಆಗಾಗ ಅಪಾಯದಲ್ಲಿದೆ, ಆದಾಗ್ಯೂ ನಾನು ನಿಮ್ಮ ನಿಯಮವನ್ನು ಮರೆಯುವುದಿಲ್ಲ.</verse>
				<verse number="110">ದುಷ್ಟರು ನನಗೆ ಬಲೆಯೊಡ್ಡಿದ್ದಾರೆ; ಆದರೂ ನಾನು ನಿಮ್ಮ ಸೂತ್ರಗಳನ್ನು ಬಿಟ್ಟು ತಪ್ಪಿಹೋಗಲಿಲ್ಲ.</verse>
				<verse number="111">ನಿಮ್ಮ ಶಾಸನಗಳನ್ನು ನಿತ್ಯ ಸೊತ್ತಾಗಿ ತೆಗೆದುಕೊಂಡಿದ್ದೇನೆ; ಏಕೆಂದರೆ ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿದೆ.</verse>
				<verse number="112">ನಿಮ್ಮ ತೀರ್ಪುಗಳನ್ನು ಕಡೆವರೆಗೂ ಪಾಲಿಸುವುದಕ್ಕೆ ನಾನು ನನ್ನ ಹೃದಯದಲ್ಲಿ ದೃಢಮಾಡಿಕೊಂಡಿದ್ದೇನೆ.</verse>
				<verse number="113">ಎರಡು ಮನಸ್ಸುಳ್ಳವರನ್ನು ನಾನು ದ್ವೇಷಿಸುತ್ತೇನೆ, ಆದರೂ ನಿಮ್ಮ ನಿಯಮವನ್ನು ನಾನು ಪ್ರೀತಿಸುತ್ತೇನೆ.</verse>
				<verse number="114">ನೀವೇ ನನ್ನ ಆಶ್ರಯವೂ, ಗುರಾಣಿಯೂ ಆಗಿದ್ದೀರಿ; ನಾನು ನನ್ನ ನಿರೀಕ್ಷೆಯನ್ನು ನಿಮ್ಮ ವಾಕ್ಯದಲ್ಲಿ ಇಟ್ಟುಕೊಂಡಿದ್ದೇನೆ.</verse>
				<verse number="115">ನಿಯಮ ಮೀರುವವರೇ, ನನ್ನಿಂದ ತೊಲಗಿರಿ, ನಾನು ನನ್ನ ದೇವರ ಆಜ್ಞೆಗಳನ್ನು ಪಾಲಿಸಲು ಬಿಡಿರಿ!</verse>
				<verse number="116">ನನ್ನ ದೇವರೇ, ನಿಮ್ಮ ವಾಕ್ಯದ ಪ್ರಕಾರ ನನ್ನನ್ನು ನೆಲೆಗೊಳಿಸಿರಿ, ಆಗ ನಾನು ಬದುಕುವೆನು; ನನ್ನ ನಿರೀಕ್ಷೆ ಮುರಿದುಹೋಗದಿರಲಿ.</verse>
				<verse number="117">ನನ್ನನ್ನು ಎತ್ತಿ ಹಿಡಿಯಿರಿ, ಆಗ ನಾನು ಬಿಡುಗಡೆಯಾಗುವೆನು; ನಿಮ್ಮ ತೀರ್ಪುಗಳಿಗೆ ಯಾವಾಗಲೂ ಗಮನಕೊಡುವೆನು.</verse>
				<verse number="118">ನಿಮ್ಮ ತೀರ್ಪುಗಳನ್ನು ಮೀರಿದವರನ್ನೆಲ್ಲಾ ನೀವು ತಿರಸ್ಕರಿಸುತ್ತೀರಿ, ಏಕೆಂದರೆ ಅವರ ಕುಯುಕ್ತಿಯು ವ್ಯರ್ಥವಾಗುವುದು.</verse>
				<verse number="119">ಭೂಮಿಯಲ್ಲಿರುವ ದುಷ್ಟರೆಲ್ಲರನ್ನು ಕಸದ ಹಾಗೆ ತೆಗೆದು ಹಾಕುತ್ತೀರಿ; ಆದ್ದರಿಂದ ನಾನು ನಿಮ್ಮ ಶಾಸನಗಳನ್ನು ಪ್ರೀತಿಸುತ್ತೇನೆ.</verse>
				<verse number="120">ನಿಮ್ಮ ಭಯದಿಂದ ನನ್ನ ಶರೀರವು ನಡುಗುತ್ತದೆ; ನಿಮ್ಮ ನಿಯಮಗಳಿಗೆ ನಾನು ಭಯಭಕ್ತಿಯುಳ್ಳವನಾಗಿದ್ದೇನೆ.</verse>
				<verse number="121">ನಾನು ನೀತಿನ್ಯಾಯವನ್ನು ನಡೆಸಿದ್ದೇನೆ; ನನ್ನ ಹಿಂಸಕರಿಗೆ ನನ್ನನ್ನು ಒಪ್ಪಿಸಬೇಡಿರಿ.</verse>
				<verse number="122">ನಿಮ್ಮ ಸೇವಕನ ಕ್ಷೇಮವನ್ನು ದೃಢಪಡಿಸಿರಿ; ಅಹಂಕಾರಿಗಳು ನನ್ನನ್ನು ಬಾಧಿಸದಿರಲಿ.</verse>
				<verse number="123">ನಿಮ್ಮ ರಕ್ಷಣೆಯನ್ನೂ ನಿಮ್ಮ ನೀತಿಯ ವಾಗ್ದಾನವನ್ನೂ ಕಾಯುತ್ತಾ, ನನ್ನ ಕಣ್ಣುಗಳು ಮಂದವಾದವು.</verse>
				<verse number="124">ನಿಮ್ಮ ಪ್ರೀತಿಗೆ ಅನುಸಾರವಾಗಿ ನಿಮ್ಮ ಸೇವಕನೊಂದಿಗೆ ವ್ಯವಹರಿಸಿ, ನಿಮ್ಮ ತೀರ್ಪುಗಳನ್ನು ನನಗೆ ಬೋಧಿಸಿರಿ.</verse>
				<verse number="125">ನಾನು ನಿಮ್ಮ ಸೇವಕನು, ನಿಮ್ಮ ಶಾಸನಗಳನ್ನು ನಾನು ಅರ್ಥಮಾಡಿಕೊಳ್ಳುವಂತೆ ನನಗೆ ವಿವೇಚನೆಯನ್ನು ಕೊಡಿರಿ.</verse>
				<verse number="126">ಯೆಹೋವ ದೇವರೇ, ಇದು ನೀವು ಕಾರ್ಯಸಾಧಿಸಲು ಸಮಯವಾಗಿದೆ, ಏಕೆಂದರೆ ನಿಮ್ಮ ನಿಯಮವು ಉಲ್ಲಂಘಿಸಲಾಗಿದೆ.</verse>
				<verse number="127">ಆದ್ದರಿಂದ ನಾನು ನಿಮ್ಮ ಆಜ್ಞೆಗಳನ್ನು ಬಂಗಾರಕ್ಕಿಂತಲೂ ಹೌದು, ಅಪರಂಜಿಗಿಂತಲೂ ಹೆಚ್ಚಾಗಿ ಪ್ರೀತಿಸುತ್ತೇನೆ,</verse>
				<verse number="128">ಅದರ ನಿಮಿತ್ತ ನಿಮ್ಮ ಸೂತ್ರಗಳೆಲ್ಲವೂ ಸರಿಯಾದವುಗಳೆಂದು ನಾನು ಅಂಗೀಕರಿಸುತ್ತೇನೆ, ಪ್ರತಿಯೊಂದು ಮೋಸ ಮಾರ್ಗವನ್ನೂ ದ್ವೇಷಿಸುತ್ತೇನೆ.</verse>
				<verse number="129">ನಿಮ್ಮ ಶಾಸನಗಳು ಅದ್ಭುತವಾದವುಗಳೇ; ಆದ್ದರಿಂದ ನಾನು ಅವುಗಳನ್ನು ಅನುಸರಿಸುತ್ತೇನೆ.</verse>
				<verse number="130">ನಿಮ್ಮ ವಾಕ್ಯಗಳನ್ನು ತೆರೆಯುವಾಗ, ಅದು ಬೆಳಕನ್ನು ಕೊಡುವುದು; ಅದು ಮುಗ್ಧರಿಗೆ ಅರಿವನ್ನು ನೀಡುವುದು.</verse>
				<verse number="131">ನಿಮ್ಮ ಆಜ್ಞೆಗಳಿಗಾಗಿರುವ ಬಯಕೆಯು, ನಾನು ಬಾಯಿತೆರೆದು ಹಂಬಲಿಸುವಂತೆ ಮಾಡುತ್ತದೆ.</verse>
				<verse number="132">ನಿಮ್ಮ ನಾಮವನ್ನು ಪ್ರೀತಿಸುವವರಿಗೆ ನೀವು ಯಾವಾಗಲೂ ಮಾಡುವಂತೆ, ನೀವು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕರುಣಿಸಿರಿ.</verse>
				<verse number="133">ನನ್ನ ಹೆಜ್ಜೆಗಳನ್ನು ನಿಮ್ಮ ವಾಕ್ಯದ ಪ್ರಕಾರ ಮುನ್ನಡೆಸಿರಿ; ಯಾವ ಪಾಪವಾದರೂ ನನ್ನನ್ನು ಆಳದಿರಲಿ.</verse>
				<verse number="134">ಜನರ ಬಲಾತ್ಕಾರದಿಂದ ನನ್ನನ್ನು ತಪ್ಪಿಸಿರಿ, ಆಗ ನಿಮ್ಮ ಸೂತ್ರಗಳನ್ನು ನಾನು ಪಾಲಿಸುವೆನು.</verse>
				<verse number="135">ನಿಮ್ಮ ಮುಖವನ್ನು ನಿಮ್ಮ ಸೇವಕನ ಮೇಲೆ ಪ್ರಕಾಶಿಸಿರಿ ಮತ್ತು ನಿಮ್ಮ ತೀರ್ಪುಗಳನ್ನು ನನಗೆ ಬೋಧಿಸಿರಿ.</verse>
				<verse number="136">ನಿಮ್ಮ ನಿಯಮವನ್ನು ಕೈಗೊಳ್ಳದೇ ಇರುವಾಗ ನನ್ನ ಕಣ್ಣಿನಿಂದ ಕಣ್ಣೀರು ಧಾರೆಯಾಗಿ ಹರಿಯುತ್ತಿವೆ.</verse>
				<verse number="137">ಯೆಹೋವ ದೇವರೇ, ನೀವು ನೀತಿವಂತರು, ನಿಮ್ಮ ನಿಯಮಗಳು ಸರಿಯಾದವುಗಳೇ.</verse>
				<verse number="138">ನೀವು ಕೊಟ್ಟ ನಿಮ್ಮ ಶಾಸನಗಳು ನೀತಿಯುಳ್ಳವುಗಳು; ಪೂರ್ಣ ಭರವಸೆಗೆ ಅವು ಯೋಗ್ಯವಾದವುಗಳು.</verse>
				<verse number="139">ನನ್ನ ವೈರಿಗಳು ನಿಮ್ಮ ಮಾತುಗಳನ್ನು ತಿರಸ್ಕರಿಸುವುದರಿಂದ, ನನ್ನ ಆಸಕ್ತಿಯು ನನ್ನನ್ನು ದಹಿಸಿಬಿಟ್ಟಿದೆ.</verse>
				<verse number="140">ನಿಮ್ಮ ವಾಗ್ದಾನಗಳು ಬಹು ಪರಿಶೋಧಿತವಾಗಿವೆ, ಆದ್ದರಿಂದ ನಿಮ್ಮ ಸೇವಕನು ಅವುಗಳನ್ನು ಪ್ರೀತಿಸುತ್ತಾನೆ.</verse>
				<verse number="141">ನಾನು ಅಲ್ಪನೂ, ತಿರಸ್ಕಾರ ಹೊಂದಿದವನು ಆಗಿದ್ದರೂ, ನಿಮ್ಮ ಸೂತ್ರಗಳನ್ನು ನಾನು ಮರೆಯುವುದಿಲ್ಲ.</verse>
				<verse number="142">ನಿಮ್ಮ ನೀತಿಯು ನಿತ್ಯವಾದದ್ದು ನಿಮ್ಮ ನಿಯಮವು ಸತ್ಯವಾದದ್ದು.</verse>
				<verse number="143">ಕಷ್ಟಸಂಕಟಗಳು ನನ್ನನ್ನು ಹಿಡಿದಿವೆ, ಆದರೂ ನಿಮ್ಮ ಆಜ್ಞೆಗಳು ನನಗೆ ಆನಂದದಾಯಕವಾಗಿವೆ.</verse>
				<verse number="144">ನಿಮ್ಮ ಶಾಸನಗಳು ಯಾವಾಗಲೂ ನೀತಿಯುಕ್ತವಾಗಿವೆ; ನಾನು ಬದುಕುವಂತೆ ನನಗೆ ವಿವೇಕವನ್ನು ಕೊಡಿರಿ.</verse>
				<verse number="145">ಯೆಹೋವ ದೇವರೇ, ಪೂರ್ಣಹೃದಯದಿಂದ ನಾನು ಮೊರೆಯಿಟ್ಟಿದ್ದೇನೆ; ನನಗೆ ಸದುತ್ತರ ನೀಡಿರಿ; ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು.</verse>
				<verse number="146">ನಿಮಗೇ ಮೊರೆಯಿಟ್ಟಿದ್ದೇನೆ; ನನ್ನನ್ನು ರಕ್ಷಿಸಿರಿ ನಾನು ನಿಮ್ಮ ಶಾಸನಗಳನ್ನು ಪಾಲಿಸುವೆನು.</verse>
				<verse number="147">ನಾನು ಸೂರ್ಯೋದಯಕ್ಕೆ ಮೊದಲು ಎದ್ದು ನಿಮಗೆ ಮೊರೆ ಇಟ್ಟಿದ್ದೇನೆ; ನಾನು ನನ್ನ ನಿರೀಕ್ಷೆಯನ್ನು ನಿಮ್ಮ ವಾಕ್ಯದಲ್ಲಿ ಇಟ್ಟಿದ್ದೇನೆ.</verse>
				<verse number="148">ನಾನು ನಿಮ್ಮ ವಾಕ್ಯವನ್ನು ಧ್ಯಾನ ಮಾಡುವಂತೆ, ರಾತ್ರಿಜಾವದಲ್ಲಿ ನನ್ನ ಕಣ್ಣುಗಳು ತೆರೆದಿರುತ್ತವೆ.</verse>
				<verse number="149">ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ ನನ್ನ ಮೊರೆಯನ್ನು ಕೇಳಿರಿ; ನಿಮ್ಮ ನಿಯಮಗಳ ಅನುಸಾರವಾಗಿ ನನ್ನ ಬದುಕನ್ನು ಕಾಪಾಡಿರಿ.</verse>
				<verse number="150">ದುಷ್ಟತನಕ್ಕೆ ಒಳಸಂಚು ಮಾಡುವವರು ನನಗೆ ಸಮೀಪವಾಗಿದ್ದಾರೆ; ಆದರೆ ಅವರು ನಿಮ್ಮ ನಿಯಮಕ್ಕೆ ಅವರು ದೂರವಾಗಿದ್ದಾರೆ.</verse>
				<verse number="151">ಯೆಹೋವ ದೇವರೇ, ನೀವು ಸಮೀಪವಾಗಿದ್ದೀರಿ, ನಿಮ್ಮ ಆಜ್ಞೆಗಳೆಲ್ಲಾ ಸತ್ಯವಾಗಿವೆ.</verse>
				<verse number="152">ನಿಮ್ಮ ಶಾಸನಗಳು ಸದಾಕಾಲಕ್ಕೂ ಇರುವಂತೆ ಅವುಗಳನ್ನು ಸ್ಥಾಪಿಸಿದ್ದೀರೆಂದು ಬಹುಕಾಲದ ಹಿಂದೆಯೇ ನಾನು ಕಲಿತುಕೊಂಡಿದ್ದೇವೆ.</verse>
				<verse number="153">ನನ್ನ ಕಷ್ಟವನ್ನು ನೋಡಿ ನನ್ನನ್ನು ಬಿಡಿಸಿರಿ; ಏಕೆಂದರೆ ನಿಮ್ಮ ನಿಯಮವನ್ನು ನಾನು ಮರೆತಿಲ್ಲ.</verse>
				<verse number="154">ನನ್ನ ಪರವಾಗಿ ವಾದಿಸಿ, ನನ್ನನ್ನು ವಿಮೋಚಿಸಿರಿ; ನಿಮ್ಮ ವಾಗ್ದಾನದ ಪ್ರಕಾರ ನನ್ನ ಬದುಕನ್ನು ಕಾಪಾಡಿರಿ.</verse>
				<verse number="155">ದುಷ್ಟರಿಗೆ ರಕ್ಷಣೆಯು ದೂರವಾಗಿದೆ; ಏಕೆಂದರೆ ಅವರು ನಿಮ್ಮ ತೀರ್ಪುಗಳನ್ನು ಹುಡುಕುವುದಿಲ್ಲ.</verse>
				<verse number="156">ಯೆಹೋವ ದೇವರೇ, ನಿಮ್ಮ ಅನುಕಂಪವು ಮಹತ್ತಾದವುಗಳು; ನಿಮ್ಮ ನಿಯಮಗಳ ಪ್ರಕಾರ ನನ್ನ ಬದುಕನ್ನು ಕಾಪಾಡಿರಿ.</verse>
				<verse number="157">ನನ್ನನ್ನು ಹಿಂಸಿಸುವ ನನ್ನ ವೈರಿಗಳು ಅನೇಕರಾಗಿದ್ದಾರೆ, ನಾನಾದರೋ ನಿಮ್ಮ ಶಾಸನಗಳನ್ನು ಬಿಟ್ಟುಬಿಡಲಿಲ್ಲ.</verse>
				<verse number="158">ನಾನು ಅಪನಂಬಿಗಸ್ತರನ್ನು ಕಂಡು ಅಸಹ್ಯಪಡುತ್ತೇನೆ, ಅವರು ನಿಮ್ಮ ಮಾತನ್ನು ಅಂಗೀಕರಿಸುತ್ತಾಯಿಲ್ಲಾ.</verse>
				<verse number="159">ನಿಮ್ಮ ಸೂತ್ರಗಳನ್ನು ನಾನು ಎಷ್ಟು ಪ್ರೀತಿಸುತ್ತೇನೆ ನೋಡಿರಿ; ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಗೆ ಅನುಸಾರವಾಗಿ ನನ್ನ ಬದುಕನ್ನು ಕಾಪಾಡಿರಿ.</verse>
				<verse number="160">ನಿಮ್ಮ ಮಾತುಗಳೆಲ್ಲಾ ಸತ್ಯವಾದವುಗಳೇ; ನಿಮ್ಮ ನೀತಿ ನಿಯಮಗಳೆಲ್ಲಾ ನಿತ್ಯವಾದವುಗಳೇ.</verse>
				<verse number="161">ಅಧಿಕಾರಿಗಳು ಕಾರಣವಿಲ್ಲದೆ ನನ್ನನ್ನು ಹಿಂಸಿಸುತ್ತಾರೆ, ಆದರೆ ನನ್ನ ಹೃದಯವು ನಿಮ್ಮ ವಾಕ್ಯಗಳಿಗೆ ನಡುಗುತ್ತದೆ.</verse>
				<verse number="162">ದೊಡ್ಡ ಕೊಳ್ಳೆಯನ್ನು ಕಂಡುಹಿಡಿದವರಂತೆ ನಾನು ನಿಮ್ಮ ವಾಗ್ದಾನದಲ್ಲಿ ಆನಂದಿಸುತ್ತೇನೆ.</verse>
				<verse number="163">ಸುಳ್ಳುತನವನ್ನು ನಾನು ದ್ವೇಷಿಸಿ ಅಸಹ್ಯಪಡುತ್ತೇನೆ ಆದರೆ ನಾನು ನಿಮ್ಮ ನಿಯಮವನ್ನು ಪ್ರೀತಿಸುತ್ತೇನೆ.</verse>
				<verse number="164">ನಿಮ್ಮ ನೀತಿಯ ನಿಯಮಗಳ ನಿಮಿತ್ತ, ನಾನು ದಿನಕ್ಕೆ ಏಳು ಸಾರಿ ನಿಮ್ಮನ್ನು ಸ್ತುತಿಸುತ್ತೇನೆ.</verse>
				<verse number="165">ನಿಮ್ಮ ನಿಯಮ ಪ್ರಿಯರಿಗೆ ಅಪಾರ ಸಮಾಧಾನವಿರುತ್ತದೆ, ಅಂಥವರಿಗೆ ಆತಂಕವೇನೂ ಇರುವುದಿಲ್ಲ.</verse>
				<verse number="166">ಯೆಹೋವ ದೇವರೇ, ನಾನು ನಿಮ್ಮ ರಕ್ಷಣೆಗಾಗಿ ಕಾದುಕೊಂಡಿದ್ದೇನೆ; ನಾನು ನಿಮ್ಮ ಆಜ್ಞೆಗಳನ್ನು ಹಿಂಬಾಲಿಸುತ್ತಿದ್ದೇನೆ.</verse>
				<verse number="167">ನಾನು ನಿಮ್ಮ ಶಾಸನಗಳನ್ನು ಅನುಸರಿಸುವದರಿಂದ, ಅವುಗಳನ್ನು ಅತ್ಯಧಿಕವಾಗಿ ಪ್ರೀತಿಸುತ್ತೇನೆ.</verse>
				<verse number="168">ನಾನು ನಿಮ್ಮ ಸೂತ್ರಗಳನ್ನೂ ಶಾಸನಗಳನ್ನೂ ಪಾಲಿಸುತ್ತೇನೆ, ಏಕೆಂದರೆ ನನ್ನ ಮಾರ್ಗಗಳೆಲ್ಲವೂ ನಿಮಗೆ ತಿಳಿದಿರುತ್ತವೆ.</verse>
				<verse number="169">ಯೆಹೋವ ದೇವರೇ, ನನ್ನ ಮೊರೆ ನಿಮ್ಮ ಸನ್ನಿಧಿ ಸೇರಲಿ; ನಿಮ್ಮ ವಾಕ್ಯದ ಪ್ರಕಾರ ನನಗೆ ಅರಿವನ್ನು ನೀಡಿರಿ.</verse>
				<verse number="170">ನನ್ನ ಬೇಡಿಕೆಯು ನಿಮ್ಮ ಸನ್ನಿಧಿ ಸೇರಲಿ; ನಿಮ್ಮ ವಾಗ್ದಾನದ ಪ್ರಕಾರ ನನ್ನನ್ನು ಬಿಡಿಸಿರಿ.</verse>
				<verse number="171">ನೀವು ನಿಮ್ಮ ತೀರ್ಪುಗಳನ್ನು ನನಗೆ ಬೋಧಿಸಿದಾಗ, ನನ್ನ ತುಟಿಗಳಿಂದ ಸ್ತೋತ್ರವು ಪ್ರವಾಹಿಸಲಿ.</verse>
				<verse number="172">ನಿಮ್ಮ ಆಜ್ಞೆಗಳೆಲ್ಲಾ ನೀತಿಯುಳ್ಳವುಗಳಾಗಿವೆ, ಆದುದರಿಂದ ನನ್ನ ನಾಲಿಗೆಯು ನಿಮ್ಮ ವಾಕ್ಯವನ್ನು ಹಾಡಿ ಹರಸಲಿ.</verse>
				<verse number="173">ನಾನು ನಿಮ್ಮ ಸೂತ್ರಗಳನ್ನು ಆರಿಸಿಕೊಂಡಿರುವುದರಿಂದ, ನಿಮ್ಮ ಕೈ ನನಗೆ ನೆರವಾಗಲಿ.</verse>
				<verse number="174">ಯೆಹೋವ ದೇವರೇ, ನಾನು ನಿಮ್ಮ ರಕ್ಷಣೆಗಾಗಿ ಬಯಸುತ್ತಿದ್ದೇನೆ, ನಿಮ್ಮ ನಿಯಮವೇ ನನಗೆ ಆನಂದವಾಗಿದೆ.</verse>
				<verse number="175">ನಿಮ್ಮನ್ನು ಸ್ತುತಿಸಲು ನಾನು ಬದುಕಿರಲಿ; ನಿಮ್ಮ ನಿಯಮಗಳು ನನ್ನನ್ನು ಕಾಪಾಡಲಿ.</verse>
				<verse number="176">ತಪ್ಪಿಹೋದ ಕುರಿಯಂತೆ ನಾನು ದಾರಿತಪ್ಪಿದ್ದೇನೆ. ನಿಮ್ಮ ಸೇವಕನಾದ ನನ್ನನ್ನು ಬಂದು ಹುಡುಕಿರಿ, ಏಕೆಂದರೆ ನಿಮ್ಮ ಆಜ್ಞೆಗಳನ್ನು ನಾನು ಮರೆಯುವುದಿಲ್ಲ.</verse>
			</chapter>
			<chapter number="120">
				<verse number="1">ನನ್ನ ಇಕ್ಕಟ್ಟಿನಲ್ಲಿ ನಾನು ಯೆಹೋವ ದೇವರಿಗೆ ಕೂಗಿದೆನು; ಅವರು ನನಗೆ ಉತ್ತರಕೊಟ್ಟರು.</verse>
				<verse number="2">ಯೆಹೋವ ದೇವರೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ, ಮೋಸದ ನಾಲಿಗೆಯಿಂದಲೂ ಬಿಡಿಸಿರಿ.</verse>
				<verse number="3">ಮೋಸದ ನಾಲಿಗೆಯೇ, ದೇವರು ನಿನಗೆ ಏನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು?</verse>
				<verse number="4">ಪರಾಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳಿಂದ ನಿನಗೆ ಶಿಕ್ಷೆಯಾಗುವುದು.</verse>
				<verse number="5">ಅಯ್ಯೋ, ನಾನು ಮೆಷೆಕಿನಲ್ಲಿ ತಂಗಬೇಕಲ್ಲಾ! ಕೇದಾರಿನ ಗುಡಾರಗಳ ಬಳಿ ವಾಸಮಾಡುತ್ತೇನೆ.</verse>
				<verse number="6">ನಾನು ಸಮಾಧಾನವನ್ನು ವಿರೋಧಿಸುವವರ ಮಧ್ಯದಲ್ಲಿ ಬಹುಕಾಲ ಜೀವಿಸಬೇಕಾಯಿತು.</verse>
				<verse number="7">ನಾನು ಶಾಂತಿ ಪ್ರಿಯನು; ಆದರೆ ನಾನು ಮಾತಾಡಿದರೆ ಅವರು ಯುದ್ಧಕ್ಕೆ ಬರುತ್ತಾರೆ.</verse>
			</chapter>
			<chapter number="121">
				<verse number="1">ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವುದು?</verse>
				<verse number="2">ಆಕಾಶವನ್ನೂ ಭೂಮಿಯನ್ನೂ ಸೃಷ್ಟಿಸಿದ ಯೆಹೋವ ದೇವರಿಂದಲೇ ನನ್ನ ಸಹಾಯವು ಬರುತ್ತದೆ.</verse>
				<verse number="3">ದೇವರು ನಿಮ್ಮ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿಮ್ಮನ್ನು ಕಾಪಾಡುವ ದೇವರು ತೂಕಡಿಸುವುದೂ ಇಲ್ಲ.</verse>
				<verse number="4">ಇಗೋ, ಇಸ್ರಾಯೇಲನ್ನು ಕಾಪಾಡುವ ದೇವರು ತೂಕಡಿಸುವುದಿಲ್ಲ, ನಿದ್ರಿಸುವುದಿಲ್ಲ.</verse>
				<verse number="5">ಯೆಹೋವ ದೇವರು ನಿಮ್ಮನ್ನು ಕಾಪಾಡುವವರಾಗಿದ್ದಾರೆ; ಯೆಹೋವ ದೇವರು ನಿಮ್ಮ ಬಲಗಡೆಯಲ್ಲಿ ನೆರಳಿನಂತೆ ಇದ್ದಾರೆ.</verse>
				<verse number="6">ಹಗಲಲ್ಲಿ ಸೂರ್ಯನೂ ನಿಮ್ಮನ್ನು ಹಾನಿಮಾಡುವುದಿಲ್ಲ. ರಾತ್ರಿಯಲ್ಲಿ ಚಂದ್ರನೂ ನಿಮ್ಮನ್ನು ಬಾಧಿಸುವುದಿಲ್ಲ.</verse>
				<verse number="7">ಯೆಹೋವ ದೇವರು ಎಲ್ಲಾ ಕೇಡಿನಿಂದ ನಿಮ್ಮನ್ನು ಕಾಪಾಡುವರು, ನಿಮ್ಮ ಪ್ರಾಣವನ್ನೂ ಕಾಪಾಡುವರು.</verse>
				<verse number="8">ಯೆಹೋವ ದೇವರು, ನೀವು ಹೋಗುವಾಗಲೂ ಬರುವಾಗಲೂ ಇಂದಿಗೂ ಎಂದೆಂದಿಗೂ ನಿಮ್ಮನ್ನು ಕಾಪಾಡುವರು.</verse>
			</chapter>
			<chapter number="122">
				<verse number="1">“ಯೆಹೋವ ದೇವರ ಆಲಯಕ್ಕೆ ಹೋಗೋಣ,” ಎಂದು ಜನರು ನನ್ನನ್ನು ಕರೆದಾಗ, ನನಗೆ ಸಂತೋಷವಾಯಿತು.</verse>
				<verse number="2">ಯೆರೂಸಲೇಮೇ, ನಮ್ಮ ಪಾದಗಳು ನಿನ್ನ ಬಾಗಿಲುಗಳಲ್ಲಿ ತಲುಪಿದೆ.</verse>
				<verse number="3">ಯೆರೂಸಲೇಮು, ಗಂಭೀರವಾಗಿಯೂ ಗಟ್ಟಿಯಾಗಿಯೂ ಕಟ್ಟಿರುವ ಪಟ್ಟಣವಾಗಿದೆ.</verse>
				<verse number="4">ಅಲ್ಲಿಗೆ ಗೋತ್ರಗಳು, ಯೆಹೋವ ದೇವರು ಇಸ್ರಾಯೇಲಿಗೆ ಕೊಟ್ಟ ಕಟ್ಟಳೆಗಳ ಪ್ರಕಾರ ಯೆಹೋವ ದೇವರ ಹೆಸರನ್ನು ಕೊಂಡಾಡುವುದಕ್ಕೆ ಗೋತ್ರಗಳು ಯಾತ್ರೆಯಾಗಿ ಬರುತ್ತಿದ್ದವು.</verse>
				<verse number="5">ಏಕೆಂದರೆ ಅಲ್ಲಿ ನ್ಯಾಯ ನಿರ್ಣಯಕ್ಕೆ ಸಿಂಹಾಸನಗಳೂ, ಅಂದರೆ, ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ.</verse>
				<verse number="6">ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥನೆಮಾಡಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಅಭಿವೃದ್ಧಿಯಾಗಲಿ.</verse>
				<verse number="7">ನಿನ್ನ ಪ್ರಾಕಾರದಲ್ಲಿ ಸಮಾಧಾನವಿರಲಿ, ನಿನ್ನ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ.”</verse>
				<verse number="8">ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ “ನಿನ್ನಲ್ಲಿ ಸಮಾಧಾನವಿರಲಿ,” ಎಂದು ಈಗ ಹೇಳುತ್ತೇನೆ.</verse>
				<verse number="9">ನಮ್ಮ ದೇವರಾದ ಯೆಹೋವ ದೇವರ ಆಲಯದ ನಿಮಿತ್ತ ನಿನಗೆ ಸಮೃದ್ಧಿಯಾಗಲಿ ಎಂದು ಹಾರೈಸುತ್ತೇನೆ.</verse>
			</chapter>
			<chapter number="123">
				<verse number="1">ಪರಲೋಕದಲ್ಲಿ ಸಿಂಹಾಸನರಾಗಿರುವವರೇ, ನಿಮ್ಮ ಕಡೆಗೆ ನನ್ನ ಕಣ್ಣುಗಳನ್ನು ಎತ್ತಿದ್ದೇನೆ.</verse>
				<verse number="2">ಇಗೋ, ದಾಸರ ಕಣ್ಣುಗಳು ತಮ್ಮ ಯಜಮಾನರ ಕೈಯನ್ನು ನೋಡುವ ಪ್ರಕಾರ, ಮತ್ತು ದಾಸಿಯ ಕಣ್ಣುಗಳು ತನ್ನ ಯಜಮಾನಿಯ ಕೈಯನ್ನೂ ನೋಡುವ ಪ್ರಕಾರ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರು, ನಮ್ಮನ್ನು ಕರುಣಿಸುವವರೆಗೆ ನಿರೀಕ್ಷೆಯಿಂದ ನೋಡುತ್ತಿರುವುದು.</verse>
				<verse number="3">ನಮ್ಮನ್ನು ಕರುಣಿಸು, ಯೆಹೋವ ದೇವರೇ, ನಮ್ಮನ್ನು ಕರುಣಿಸು; ಏಕೆಂದರೆ ನಾವು ಬಹಳವಾಗಿ ತಿರಸ್ಕಾರವನ್ನು ಅನುಭವಿಸಿದ್ದೇವೆ.</verse>
				<verse number="4">ನಾವು ಸುಖಭೋಗಿಗಳ ಗೇಲಿಯನ್ನೂ ಗರ್ವಿಷ್ಠರಿಂದ ತಿರಸ್ಕಾರವನ್ನೂ ಅನುಭವಿಸಿದ್ದೇವೆ.</verse>
			</chapter>
			<chapter number="124">
				<verse number="1">ಯೆಹೋವ ದೇವರು ನಮ್ಮ ಪರವಾಗಿ ಇರದಿದ್ದರೆ, ಏನಾಗುತ್ತಿತ್ತು ಎಂದು ಇಸ್ರಾಯೇಲರೇ ಹೇಳಲಿ.</verse>
				<verse number="2">ವೈರಿಗಳು ನಮಗೆ ವಿರೋಧವಾಗಿ ಎದ್ದಾಗ ಯೆಹೋವ ದೇವರು ನಮ್ಮ ಪರವಾಗಿ ಇರದಿದ್ದರೆ,</verse>
				<verse number="3">ಅವರು ನಮ್ಮ ಮೇಲೆ ರೋಷಗೊಂಡು ನಮ್ಮನ್ನು ನಾಶಮಾಡಿಬಿಡುತ್ತಿದ್ದರು.</verse>
				<verse number="4">ಆಗ ಪ್ರವಾಹವು ನಮ್ಮನ್ನು ಮುಳುಗಿಸುತ್ತಿತ್ತು; ತೊರೆಯು ನಮ್ಮ ಪ್ರಾಣದ ಮೇಲೆ ಹರಿಯುತ್ತಿತ್ತು.</verse>
				<verse number="5">ರಭಸ ಪ್ರವಾಹ ನಮ್ಮನ್ನು ಕೊಚ್ಚಿಕೊಂಡು ಹೋಗಿಬಿಡುತ್ತಿತ್ತು.</verse>
				<verse number="6">ಆದರೆ ನಮ್ಮನ್ನು ವೈರಿಗಳ ಹಲ್ಲುಗಳಿಗೆ ಬೇಟೆಯಾಗಿ ಕೊಡದೆ ಇದ್ದ ಯೆಹೋವ ದೇವರಿಗೆ ಸ್ತೋತ್ರವಾಗಲಿ.</verse>
				<verse number="7">ನಾವು ಬೇಟೆಗಾರರ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತೆ ಇದ್ದೇವೆ. ನಾವು ಹರಿದುಹೋದ ಬಲೆಯಿಂದ ತಪ್ಪಿಸಿಕೊಂಡೆವು.</verse>
				<verse number="8">ನಮ್ಮ ಸಹಾಯವು ಆಕಾಶವನ್ನೂ, ಭೂಮಿಯನ್ನೂ ಸೃಷ್ಟಿಸಿದ ಯೆಹೋವ ದೇವರ ಹೆಸರಿನಲ್ಲಿ ಒದಗಿ ಬಂತು.</verse>
			</chapter>
			<chapter number="125">
				<verse number="1">ಯೆಹೋವ ದೇವರಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿದ್ದಾರೆ; ಆ ಪರ್ವತವು ಯುಗಯುಗಕ್ಕೂ ಕದಲದೆ ಇರುವುದು.</verse>
				<verse number="2">ಯೆರೂಸಲೇಮಿನ ಸುತ್ತಲೂ ಬೆಟ್ಟಗಳಿರುವಂತೆ, ಯೆಹೋವ ದೇವರು ಈಗಿನಿಂದ ಯುಗಯುಗಕ್ಕೂ ತಮ್ಮ ಜನರ ಸುತ್ತಲೂ ಇದ್ದಾರೆ.</verse>
				<verse number="3">ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವುದಿಲ್ಲ.</verse>
				<verse number="4">ಯೆಹೋವ ದೇವರೇ, ಒಳ್ಳೆಯವರಿಗೂ, ಯಥಾರ್ಥ ಹೃದಯವುಳ್ಳವರಿಗೂ ಒಳ್ಳೆಯದನ್ನು ಮಾಡುತ್ತಾರೆ.</verse>
				<verse number="5">ಆದರೆ ಡೊಂಕು ಮಾರ್ಗಗಳಲ್ಲಿ ತಿರುಗುವವರನ್ನು, ದುಷ್ಟರ ಸಂಗಡ ದೇವರು ತೊಲಗಿಸಲಿ. ಇಸ್ರಾಯೇಲರ ಮೇಲೆ ಸಮಾಧಾನವಿರಲಿ.</verse>
			</chapter>
			<chapter number="126">
				<verse number="1">ಯೆಹೋವ ದೇವರು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡವರ ಹಾಗಿದ್ದೆವು.</verse>
				<verse number="2">ಆಗ ನಮ್ಮ ಬಾಯಿ ನಗೆಯಿಂದಲೂ, ನಮ್ಮ ಬಾಯಿ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಜನಾಂಗಗಳು, “ಯೆಹೋವ ದೇವರು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ,” ಎಂದು ಹೇಳಿದರು.</verse>
				<verse number="3">ಯೆಹೋವ ದೇವರು ನಮಗೆ ಮಹತ್ಕಾರ್ಯಗಳನ್ನು ಮಾಡಿದ್ದಾರೆ; ಆದಕಾರಣ ಸಂತೋಷಿಸುತ್ತಾ ಇದ್ದೇವೆ.</verse>
				<verse number="4">ಯೆಹೋವ ದೇವರೇ, ನೆಗೆವನಲ್ಲಿರುವ ಹೊಳೆಗಳ ಹಾಗೆ ಉಳಿದಿರುವವರನ್ನು ಸಹ ಸೆರೆಯಿಂದ ತಿರುಗಿ ಬರಮಾಡಿರಿ.</verse>
				<verse number="5">ಕಣ್ಣೀರಿನಿಂದ ಬಿತ್ತುವವರು, ಆನಂದ ಗೀತದೊಡನೆ ಕೊಯ್ಯುವರು;</verse>
				<verse number="6">ಬಿತ್ತಲು ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವರು, ತಮ್ಮ ಸಿವುಡುಗಳನ್ನು ಹೊತ್ತುಕೊಂಡು ಆನಂದ ಗೀತದೊಡನೆ ತಿರುಗಿ ಬರುವರು.</verse>
			</chapter>
			<chapter number="127">
				<verse number="1">ಯೆಹೋವ ದೇವರು ಮನೆಯನ್ನು ಕಟ್ಟದೆ ಇದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಪ್ರಯಾಸಪಡುತ್ತಾರೆ; ಯೆಹೋವ ದೇವರು ಪಟ್ಟಣವನ್ನು ಕಾಯದೆ ಇದ್ದರೆ, ಅದನ್ನು ಕಾಯುವವರು ವ್ಯರ್ಥವಾಗಿ ಕಾಯುತ್ತಾರೆ.</verse>
				<verse number="2">ನೀವು ಆಹಾರಕ್ಕಾಗಿ ಶ್ರಮೆಪಟ್ಟು, ಬೆಳಿಗ್ಗೆ ಬೇಗ ಏಳುವುದೂ, ರಾತ್ರಿ ತಡವಾಗಿ ಮಲಗುವುದೂ ವ್ಯರ್ಥವೇ, ದೇವರು ತಮ್ಮನ್ನು ಪ್ರೀತಿಸುವವರಿಗೆ ನಿದ್ರೆಯಿಂದಿರುವಾಗಲೂ ಅವಶ್ಯಕತೆಗಳನ್ನು ಒದಗಿಸಿಕೊಡುತ್ತಾರೆ.</verse>
				<verse number="3">ಮಕ್ಕಳು ಯೆಹೋವ ದೇವರು ಕೊಟ್ಟ ಸೊತ್ತು. ಗರ್ಭಫಲವು ದೇವರ ಬಹುಮಾನ.</verse>
				<verse number="4">ಯೌವನದಲ್ಲಿ ಹುಟ್ಟಿದ ಮಕ್ಕಳು, ಯುದ್ಧವೀರನ ಕೈಯಲ್ಲಿಯ ಬಾಣಗಳಂತಿದ್ದಾರೆ.</verse>
				<verse number="5">ಬಾಣಗಳನ್ನು ಬತ್ತಳಿಕೆಯಿಂದ ತುಂಬಿಸಿಕೊಂಡಿರುವವರು ಧನ್ಯರು, ಶತ್ರುಗಳ ಸಂಗಡ ನ್ಯಾಯಾಲಯದಲ್ಲಿ ವಾದಿಸುವಾಗ ಅವರು ನಾಚಿಕೆಪಡರು.</verse>
			</chapter>
			<chapter number="128">
				<verse number="1">ಯೆಹೋವ ದೇವರಿಗೆ ಭಯಪಟ್ಟು ಅವರ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.</verse>
				<verse number="2">ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಆಶೀರ್ವಾದವನ್ನೂ ಅಭಿವೃದ್ಧಿಯನ್ನೂ ಹೊಂದುವಿ.</verse>
				<verse number="3">ನಿನ್ನ ಹೆಂಡತಿಯು ನಿನ್ನ ಮನೆಯಲ್ಲಿರುವ ಫಲಭರಿತವಾದ ದ್ರಾಕ್ಷಿಬಳ್ಳಿಯ ಹಾಗೆ ಇರುವಳು. ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು, ಓಲಿವ್ ಮರಗಳ ಸಸಿಗಳ ಹಾಗೆ ಇರುವರು.</verse>
				<verse number="4">ಯೆಹೋವ ದೇವರಿಗೆ ಭಯಪಡುವ ಮನುಷ್ಯನು ಹೀಗೆಯೇ ಆಶೀರ್ವಾದ ಹೊಂದುವನು.</verse>
				<verse number="5">ಯೆಹೋವ ದೇವರು ನಿನ್ನನ್ನು ಚೀಯೋನಿನೊಳಗಿಂದ ನಿನ್ನ ಜೀವಮಾನವೆಲ್ಲಾ ಆಶೀರ್ವದಿಸಲಿ; ನೀನು ಯೆರೂಸಲೇಮಿನ ಸಮೃದ್ಧಿಯನ್ನು ಕಾಣುವಿ.</verse>
				<verse number="6">ನೀನು ಮಕ್ಕಳ ಮಕ್ಕಳನ್ನು ಕಾಣುವ ಬದುಕು ನಿನಗಿರಲಿ ಇಸ್ರಾಯೇಲರ ಮೇಲೆ ಸಮಾಧಾನವಿರಲಿ.</verse>
			</chapter>
			<chapter number="129">
				<verse number="1">“ನನ್ನ ಯೌವನದಿಂದ ನನ್ನನ್ನು ಶತ್ರುಗಳು ಬಹಳ ಬಾಧಿಸಿದ್ದಾರೆ,” ಎಂದು ಇಸ್ರಾಯೇಲು ಹೇಳಲಿ.</verse>
				<verse number="2">“ನನ್ನ ಯೌವನದಿಂದ ವೈರಿಗಳು ನನ್ನ ಮೇಲೆ ದಬ್ಬಾಳಿಕೆ ಮಾಡಿದರು; ಆದರೆ ಅವರು ನನ್ನ ಮೇಲೆ ವಿಜಯ ಸಾಧಿಸಲಿಲ್ಲ.</verse>
				<verse number="3">ಊಳುವವರು ನನ್ನ ಬೆನ್ನಿನ ಮೇಲೆ ಉತ್ತಿದರು, ಉದ್ದವಾದ ಗಾಯಗೆರೆಗಳನ್ನು ಮಾಡಿದರು</verse>
				<verse number="4">ಆದರೆ ಯೆಹೋವ ದೇವರು ನೀತಿವಂತರು; ದುಷ್ಟರು ಹಾಕಿದ ಬಂಧಗಳನ್ನು ದೇವರು ಕಡಿದು, ನಮ್ಮನ್ನು ಬಿಡುಗಡೆ ಮಾಡಿದ್ದಾರೆ.”</verse>
				<verse number="5">ಚೀಯೋನನ್ನು ದ್ವೇಷಿಸುವವರೆಲ್ಲರು ನಾಚಿಕೆಪಟ್ಟು ಹಿಂದಿರುಗಲಿ.</verse>
				<verse number="6">ಅವರು ಮಾಳಿಗೆ ಮೇಲಿನ ಹುಲ್ಲಿನಂತೆ ಆಗಲಿ. ಅವು ಬೆಳೆಯುವುದಕ್ಕೆ ಮುಂಚೆ ಒಣಗಿ ಹೋಗುತ್ತದೆ.</verse>
				<verse number="7">ಅದರಿಂದ ಕೊಯ್ಯುವವನು ತನ್ನ ಕೈ ತುಂಬಿಸಿಕೊಳ್ಳನು, ಸಿವುಡು ಕಟ್ಟುವವನು ತನ್ನ ಉಡಿಯನ್ನೂ ತುಂಬಿಸಿಕೊಳ್ಳಲಾರನು.</verse>
				<verse number="8">“ಯೆಹೋವ ದೇವರ ಆಶೀರ್ವಾದವು ನಿಮ್ಮ ಮೇಲೆ ಇರಲಿ; ಯೆಹೋವ ದೇವರು ಹೆಸರಿನಲ್ಲಿ ನಿಮ್ಮನ್ನು ಆಶೀರ್ವದಿಸುತ್ತೇವೆ,” ಎಂದು ಹಾದುಹೋಗುವವರು ಹೇಳದಿರಲಿ.</verse>
			</chapter>
			<chapter number="130">
				<verse number="1">ಯೆಹೋವ ದೇವರೇ, ಅಂತರಾಳದಿಂದ ನಿಮಗೆ ಮೊರೆಯಿಡುತ್ತೇನೆ.</verse>
				<verse number="2">ಯೆಹೋವ ದೇವರೇ, ನನ್ನ ಧ್ವನಿಯನ್ನು ಕೇಳಿರಿ. ನನ್ನ ಕೂಗಿಗೆ ಕರುಣೆ ತೋರಿಸಿ, ನಿಮ್ಮ ಕಿವಿಗಳು ನನ್ನ ವಿಜ್ಞಾಪನೆಗಳನ್ನು ಆಲೈಸಲಿ.</verse>
				<verse number="3">ಯೆಹೋವ ದೇವರೇ, ನೀವು ಪಾಪಗಳನ್ನು ಎಣಿಸಿದರೆ, ನಿಮ್ಮ ಮುಂದೆ ಯಾರು ನಿಲ್ಲುವರು?</verse>
				<verse number="4">ಆದರೆ ನಿಮ್ಮಲ್ಲಿ ಕ್ಷಮಾಪಣೆ ಉಂಟು. ನಾವು ನಿಮ್ಮನ್ನು ಭಯಭಕ್ತಿಯಿಂದ ಸೇವೆಮಾಡುವಂತೆ ನಿಮ್ಮ ಕ್ಷಮಾಪಣೆಯಿದೆ.</verse>
				<verse number="5">ಯೆಹೋವ ದೇವರನ್ನು ನಿರೀಕ್ಷಿಸುತ್ತೇನೆ, ನನ್ನ ಅಂತರಾಳವು ಸಹ ನಿರೀಕ್ಷಿಸುತ್ತದೆ; ನಾನು ದೇವರ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.</verse>
				<verse number="6">ಉದಯಕ್ಕಾಗಿ ಕಾವಲುಗಾರ ಕಾದಿರುತ್ತಾರೆ. ನಾನು ಆ ಕಾವಲುಗಾರರು ಕಾದಿರುವುದಕ್ಕಿಂತ ಹೆಚ್ಚಾಗಿಯೇ ಯೆಹೋವ ದೇವರಿಗಾಗಿ ನಿರೀಕ್ಷಿಸುತ್ತಿದ್ದೇನೆ.</verse>
				<verse number="7">ಇಸ್ರಾಯೇಲು ಯೆಹೋವ ದೇವರಲ್ಲಿ ನಿರೀಕ್ಷಿಸಲಿ, ಏಕೆಂದರೆ ಯೆಹೋವ ದೇವರ ಬಳಿಯಲ್ಲಿ ಒಂಡಬಡಿಕೆಯ ಪ್ರೀತಿ ಇರುತ್ತದೆ, ಸಂಪೂರ್ಣ ವಿಮೋಚನೆಯೂ ಇರುತ್ತದೆ.</verse>
				<verse number="8">ದೇವರು ಇಸ್ರಾಯೇಲನ್ನು ಅವರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವರು.</verse>
			</chapter>
			<chapter number="131">
				<verse number="1">ಯೆಹೋವ ದೇವರೇ, ನನ್ನ ಹೃದಯವು ಗರ್ವದ್ದಲ್ಲ, ನನಗೆ ಸೊಕ್ಕಿನ ಕಣ್ಣಿಲ್ಲ ದೊಡ್ಡ ವಿಷಯಗಳಲ್ಲಿಯೂ ನನಗೆ ನಿಲುಕಲಾರದವುಗಳಲ್ಲಿಯೂ ನಾನು ಕೈ ಹಾಕುವುದಿಲ್ಲ.</verse>
				<verse number="2">ಆದರೆ ಹಾಲುಬಿಡಿಸಿದ ಕೂಸು ತನ್ನ ತಾಯಿಯ ಮಡಿಲಲ್ಲಿರುವಂತೆ ನನ್ನ ಪ್ರಾಣವನ್ನು ಸಮಾಧಾನ ಪಡಿಸಿದ್ದೇನೆ. ನಾನು ತಾಯಿಯ ಮಡಿಲಲ್ಲಿರುವ ಕೂಸಿನಂತೆ ಸಂತೃಪ್ತಿಯಿಂದ ಇದ್ದೇನೆ.</verse>
				<verse number="3">ಇಸ್ರಾಯೇಲೇ, ಯೆಹೋವ ದೇವರಲ್ಲಿ ನಿನ್ನ ನಿರೀಕ್ಷೆಯನ್ನಿಡು. ಈಗಲೂ, ಎಂದೆಂದಿಗೂ ನಿರೀಕ್ಷೆಯಿಂದಿರು.</verse>
			</chapter>
			<chapter number="132">
				<verse number="1">ಯೆಹೋವ ದೇವರೇ, ದಾವೀದನನ್ನೂ ಅವನ ಎಲ್ಲಾ ಶ್ರಮೆಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.</verse>
				<verse number="2">ದಾವೀದನು ಯೆಹೋವ ದೇವರಿಗೆ ಆಣೆ ಇಟ್ಟು, ಪರಾಕ್ರಮಿಯಾದ ಯಾಕೋಬನ ದೇವರಿಗೆ ಹೀಗೆಂದು ಪ್ರಮಾಣ ಮಾಡಿದನು:</verse>
				<verse number="3">“ಯೆಹೋವ ದೇವರಿಗೆ ಒಂದು ಸ್ಥಳವನ್ನೂ, ಯಾಕೋಬನ ದೇವರಿಗೆ ನಿವಾಸವನ್ನೂ ಕಟ್ಟುವವರೆಗೆ ನಿಶ್ಚಯವಾಗಿ,</verse>
				<verse number="4">ನಾನು ನನ್ನ ಮನೆ ಸೇರೆನು; ನನ್ನ ಮಂಚವನ್ನು ಏರೆನು.</verse>
				<verse number="5">ನನ್ನ ಕಣ್ಣುಗಳಿಗೆ ನಿದ್ದೆಯನ್ನು ಕೊಡೆನು, ನನ್ನ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡೆನು.”</verse>
				<verse number="6">ನಾವು ಎಫ್ರಾತದಲ್ಲಿ ಇದನ್ನು ಕೇಳಿದೆವು; ಯಹಾರ್ ಅಡವಿಯ ಬಯಲುಗಳಲ್ಲಿ ಇದನ್ನು ಕಂಡು ಹೀಗೆಂದು ಕೇಳಿಸಿಕೊಂಡೆವು:</verse>
				<verse number="7">“ಬನ್ನಿರಿ ನಾವು ದೇವರ ಮಂದಿರಕ್ಕೆ ಹೋಗಿ, ಅವರ ಪಾದಪೀಠದಲ್ಲಿ ಆರಾಧಿಸೋಣ.</verse>
				<verse number="8">‘ಯೆಹೋವ ದೇವರೇ, ಎದ್ದು ನಿಮ್ಮ ವಿಶ್ರಾಂತಿಯ ಸ್ಥಳಕ್ಕೆ ಬನ್ನಿರಿ; ನೀವೂ, ನಿಮ್ಮ ಶಕ್ತಿಯುತ ಮಂಜೂಷವೂ ಬರಲಿ.</verse>
				<verse number="9">ನಿಮ್ಮ ಯಾಜಕರು ನೀತಿಯೆಂಬ ವಸ್ತ್ರವನ್ನು ಧರಿಸಿಕೊಳ್ಳಲಿ; ನಿಮ್ಮ ಭಕ್ತರು ಉತ್ಸಾಹಧ್ವನಿ ಮಾಡಲಿ.’ ”</verse>
				<verse number="10">ನಿಮ್ಮ ಸೇವಕನಾದ ದಾವೀದನ ನಿಮಿತ್ತ, ನಿಮ್ಮ ಅಭಿಷಿಕ್ತನನ್ನು ತಿರಸ್ಕರಿಸಬೇಡಿರಿ.</verse>
				<verse number="11">ಯೆಹೋವ ದೇವರು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾರೆ; ತಾವು ಹೀಗೆಂದು ಆಣೆಯಿಟ್ಟುಕೊಟ್ಟ ಮಾತನ್ನು ದೇವರು ಬದಲಿಸುವುದಿಲ್ಲ, “ನಿನ್ನ ಸಂತತಿಯವನನ್ನೇ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು.</verse>
				<verse number="12">ನಿಮ್ಮ ಮಕ್ಕಳು ನನ್ನ ಶಾಸನಗಳನ್ನೂ ನನ್ನ ಒಡಂಬಡಿಕೆಯನ್ನು ಸನ್ಮಾನಿಸಿ, ಕೈಗೊಂಡರೆ, ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನದಲ್ಲಿ ಕೂರುವರು.”</verse>
				<verse number="13">ಏಕೆಂದರೆ, ಯೆಹೋವ ದೇವರು ಚೀಯೋನನ್ನು ಆಯ್ದುಕೊಂಡು ಅದನ್ನು ತಮ್ಮ ವಾಸಕ್ಕಾಗಿ ಅಪೇಕ್ಷಿಸಿ ಹೀಗೆಂದಿದ್ದಾರೆ:</verse>
				<verse number="14">“ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯ ಸ್ಥಳವಾಗಿರುವುದು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ; ಇಲ್ಲಿಯೇ ಸಿಂಹಾಸನಾರೂಢನಾಗಿರುವೆನು.</verse>
				<verse number="15">ಧಾರಾಳವಾಗಿ ದವಸಧಾನ್ಯಗಳಿರಲೆಂದು ನಾನು ಚೀಯೋನನ್ನು ಆಶೀರ್ವದಿಸುವೆನು; ಇಲ್ಲಿ ವಾಸಿಸುವ ಬಡವರು ಉಂಡು ಸಂತೃಪ್ತಿಯಿಂದಿರುವರು.</verse>
				<verse number="16">ಇಲ್ಲಿನ ಯಾಜಕರಿಗೆ ರಕ್ಷಣೆಯನ್ನು ಹೊದಿಸುವೆನು; ಚೀಯೋನಿನ ನಂಬಿಗಸ್ತ ಸೇವಕರು ಉತ್ಸಾಹಧ್ವನಿಯಿಂದ ಹಾಡುವರು.</verse>
				<verse number="17">“ಇಲ್ಲಿ ದಾವೀದನಿಗೆ ಬಲದಾಯಕ ಅರಸನನ್ನು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.</verse>
				<verse number="18">ಇಲ್ಲಿ ಆತನ ಶತ್ರುಗಳಿಗೆ ನಾಚಿಕೆಯ ವಸ್ತ್ರವನ್ನು ಹೊದಿಸುವೆನು; ಆದರೆ ಆತನ ತೆರೆಯ ಮೇಲೆ ಕಿರೀಟವು ಶೋಭಿಸುವುದು.”</verse>
			</chapter>
			<chapter number="133">
				<verse number="1">ಸಹೋದರರು ಒಂದಾಗಿ ಬಾಳುವುದು ಎಷ್ಟೋ ಒಳ್ಳೆಯದು! ಎಷ್ಟೋ ರಮ್ಯವಾದದ್ದು!</verse>
				<verse number="2">ಆ ಒಂದಾಗಿರುವಿಕೆಯು ತಲೆಯ ಮೇಲಿಂದ ಗಡ್ಡದ ಮೇಲೆ ಅಂದರೆ, ಆರೋನನ ಗಡ್ಡದ ಮೇಲೆ ಇಳಿದು, ಅವನ ವಸ್ತ್ರದ ಕೊರಳಪಟ್ಟಿಯವರೆಗೆ ಮೇಲೆ ಇಳಿಯುವ ಅಮೂಲ್ಯ ತೈಲದ ಹಾಗೆ ಇರುತ್ತದೆ.</verse>
				<verse number="3">ಆ ಒಂದಾಗಿರುವಿಕೆಯು ಹೆರ್ಮೋನ್ ಪರ್ವತದಿಂದ ಪ್ರಾರಂಭವಾಗಿ ಚೀಯೋನ್ ಪರ್ವತಗಳ ಮೇಲೆ ಬೀಳುವ ಮಂಜಿನ ಹಾಗೆಯೂ ಇದೆ. ಏಕೆಂದರೆ ಎಲ್ಲಿ ಒಂದಾಗಿರುವಿಕೆಯು ಇದೆಯೋ ಅಲ್ಲಿ ಯೆಹೋವ ದೇವರು ಆಶೀರ್ವಾದವನ್ನೂ, ಯುಗಯುಗಾಂತರಕ್ಕೂ ಜೀವವನ್ನೂ ಅನುಗ್ರಹಿಸುತ್ತಾರೆ.</verse>
			</chapter>
			<chapter number="134">
				<verse number="1">ಯೆಹೋವ ದೇವರ ಆಲಯದಲ್ಲಿ ಪ್ರತಿ ರಾತ್ರಿ ಸೇವೆ ಸಲ್ಲಿಸುವ ಯೆಹೋವ ದೇವರ ಎಲ್ಲಾ ಸೇವಕರೇ, ಯೆಹೋವ ದೇವರನ್ನು ಸ್ತುತಿಸಿರಿ.</verse>
				<verse number="2">ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ, ಯೆಹೋವ ದೇವರನ್ನು ಸ್ತುತಿಸಿರಿ.</verse>
				<verse number="3">ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ ಯೆಹೋವ ದೇವರು, ಚೀಯೋನಿನೊಳಗಿಂದ ನಿಮ್ಮನ್ನು ಆಶೀರ್ವದಿಸಲಿ.</verse>
			</chapter>
			<chapter number="135">
				<verse number="1">ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರ ಹೆಸರನ್ನು ಸ್ತುತಿಸಿರಿ; ಯೆಹೋವ ದೇವರ ಆಲಯದಲ್ಲಿಯೂ,</verse>
				<verse number="2">ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವ ಯೆಹೋವ ದೇವರ ಸೇವಕರೇ, ಸ್ತುತಿಸಿರಿ.</verse>
				<verse number="3">ಯೆಹೋವ ದೇವರನ್ನು ಸ್ತುತಿಸಿರಿ, ಯೆಹೋವ ದೇವರು ಒಳ್ಳೆಯವರು; ದೇವರ ಹೆಸರಿಗೆ ಸ್ತುತಿಗಳನ್ನು ಹಾಡಿರಿ, ಏಕೆಂದರೆ ಅದು ರಮ್ಯವಾದದ್ದು.</verse>
				<verse number="4">ಯೆಹೋವ ದೇವರು ಯಾಕೋಬನನ್ನು ತಮಗೋಸ್ಕರ ಆಯ್ದುಕೊಂಡರು, ಇಸ್ರಾಯೇಲನ್ನು ತಮ್ಮ ಶ್ರೇಷ್ಠ ಸಂಪತ್ತಾಗಿಯೂ ಆಯ್ದುಕೊಂಡಿದ್ದಾರೆ.</verse>
				<verse number="5">ಯೆಹೋವ ದೇವರು ದೊಡ್ಡವರು; ನಮ್ಮ ಯೆಹೋವ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವರೆಂದು ನಾನು ತಿಳಿದಿದ್ದೇನೆ.</verse>
				<verse number="6">ಯೆಹೋವ ದೇವರು ಆಕಾಶದಲ್ಲಿಯೂ, ಭೂಮಿಯಲ್ಲಿಯೂ, ಸಮುದ್ರದಲ್ಲಿಯೂ, ಎಲ್ಲಾ ಅಗಾಧಗಳಲ್ಲಿಯೂ ತಾವು ಅಪೇಕ್ಷಿಸುವುದನ್ನೆಲ್ಲಾ ಮಾಡುತ್ತಾರೆ.</verse>
				<verse number="7">ಭೂಮಿಯ ಎಲ್ಲಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಯನ್ನೂ ಮಿಂಚನ್ನೂ ಕಳುಹಿಸುತ್ತಾರೆ. ಗಾಳಿಯನ್ನು ತಮ್ಮ ಉಗ್ರಾಣಗಳಿಂದ ಬೀಸುವಂತೆ ಮಾಡುತ್ತಾರೆ.</verse>
				<verse number="8">ದೇವರು ಈಜಿಪ್ಟ್ ಜನರನ್ನು ಮೊದಲುಗೊಂಡು ಪಶುಗಳವರೆಗೂ ಚೊಚ್ಚಲುಗಳನ್ನೆಲ್ಲಾ ದಂಡಿಸಿದರು.</verse>
				<verse number="9">ಈಜಿಪ್ಟೇ, ನಿಮ್ಮ ಮಧ್ಯದಲ್ಲಿ ಸೂಚಕಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ದೇವರು ಫರೋಹನಿಗೂ, ಅವನ ಸಕಲ ಸೇವಕರಿಗೂ ವಿರೋಧವಾಗಿ ಕಳುಹಿಸಿದನು.</verse>
				<verse number="10">ದೇವರು ದೊಡ್ಡ ಜನಾಂಗಗಳನ್ನೂ, ಬಲವಾದ ಅರಸರನ್ನೂ ದಂಡಿಸಿದರು.</verse>
				<verse number="11">ಅಮೋರಿಯರ ಅರಸನಾದ ಸೀಹೋನನನ್ನು, ಬಾಷಾನಿನ ಅರಸನಾದ ಓಗನನ್ನೂ, ಕಾನಾನಿನ ಎಲ್ಲಾ ಅರಸರನ್ನೂ ದಂಡಿಸಿದರು.</verse>
				<verse number="12">ದೇವರು ದೇಶವನ್ನು ಸೊತ್ತಾಗಿ ತಮ್ಮ ಪ್ರಜೆಯಾದ ಇಸ್ರಾಯೇಲಿಗೆ ಕೊಟ್ಟರು.</verse>
				<verse number="13">ಯೆಹೋವ ದೇವರೇ, ನಿಮ್ಮ ನಾಮವೂ, ನಿಮ್ಮ ಪ್ರಭಾವವೂ ತಲತಲಾಂತರಕ್ಕೂ ಸ್ಮರಣೆಯಾಗಿರುವುದು.</verse>
				<verse number="14">ಯೆಹೋವ ದೇವರು ತಮ್ಮ ಜನರಿಗೆ ನ್ಯಾಯವನ್ನು ಸ್ಥಾಪಿಸುವರು, ತಮ್ಮ ಸೇವಕರ ಮೇಲೆ ಅನುಕಂಪವನ್ನೂ ತೋರಿಸುವರು.</verse>
				<verse number="15">ವಿಗ್ರಹಗಳು ಬೆಳ್ಳಿ, ಬಂಗಾರದವುಗಳು, ಅವು ಮನುಷ್ಯರ ಕೈಯಿಂದ ಮಾಡಲಾಗಿವೆ.</verse>
				<verse number="16">ಅವುಗಳಿಗೆ ಬಾಯಿಯಿದೆ, ಮಾತನಾಡುವುದಿಲ್ಲ; ಕಣ್ಣುಗಳಿವೆ, ಕಾಣುವುದಿಲ್ಲ.</verse>
				<verse number="17">ಕಿವಿಗಳಿವೆ, ಕೇಳಿಸಿಕೊಳ್ಳುವುದಿಲ್ಲ; ಅವುಗಳ ಬಾಯಲ್ಲಿ ಶ್ವಾಸ ಇಲ್ಲ.</verse>
				<verse number="18">ಅವುಗಳನ್ನು ಮಾಡುವವರು ಅವುಗಳಂತೆಯೇ ಇದ್ದಾರೆ; ಅವುಗಳಲ್ಲಿ ಭರವಸವಿಡುವವರು ಅವುಗಳಂತಾಗುವರು.</verse>
				<verse number="19">ಇಸ್ರಾಯೇಲ್ ಮನೆತನದವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ; ಆರೋನನ ಮನೆತನದವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ.</verse>
				<verse number="20">ಲೇವಿಯ ಮನೆತನದವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ; ದೇವರಲ್ಲಿ ಭಯಭಕ್ತಿಯುಳ್ಳವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ.</verse>
				<verse number="21">ಯೆರೂಸಲೇಮಿನಲ್ಲಿ ವಾಸಿಸುವವ ಯೆಹೋವ ದೇವರನ್ನು ಕೊಂಡಾಡಿ ಸ್ತುತಿಸಿರಿ; ಅವರ ಕೀರ್ತಿಯು ಚೀಯೋನಿನಿಂದ ಹೊರಗೂ ಹಬ್ಬಲಿ. ಯೆಹೋವ ದೇವರಿಗೆ ಸ್ತೋತ್ರ.</verse>
			</chapter>
			<chapter number="136">
				<verse number="1">ಯೆಹೋವ ದೇವರಿಗೆ ಉಪಕಾರ ಸಲ್ಲಿಸಿರಿ; ಅವರು ಒಳ್ಳೆಯವರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.</verse>
				<verse number="2">ದೇವಾಧಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿರಿ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.</verse>
				<verse number="3">ಪ್ರಭುಗಳ ಪ್ರಭುವಿಗೆ ಕೃತಜ್ಞತಾಸ್ತುತಿ ಸಲ್ಲಿಸಿರಿ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.</verse>
				<verse number="4">ಅವರೊಬ್ಬರೇ ಮಹಾ ಅದ್ಭುತಗಳನ್ನು ಮಾಡುತ್ತಾರೆ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.</verse>
				<verse number="5">ತಮ್ಮ ಜ್ಞಾನದಿಂದ ಪರಲೋಕಗಳನ್ನು ನಿರ್ಮಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.</verse>
				<verse number="6">ನೀರಿನ ಮೇಲೆ ಭೂಮಿಯನ್ನು ವಿಸ್ತರಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.</verse>
				<verse number="7">ದೊಡ್ಡ ಬೆಳಕುಗಳನ್ನು ನಿರ್ಮಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.</verse>
				<verse number="8">ಸೂರ್ಯನು ಹಗಲನ್ನಾಳುವಂತೆ ಮಾಡಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.</verse>
				<verse number="9">ರಾತ್ರಿಯನ್ನಾಳಲು ಚಂದ್ರನನ್ನೂ, ನಕ್ಷತ್ರಗಳನ್ನೂ ಇಟ್ಟರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.</verse>
				<verse number="10">ಈಜಿಪ್ಟಿನವರ ಚೊಚ್ಚಲ ಮಕ್ಕಳನ್ನು ದಂಡಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.</verse>
				<verse number="11">ಇಸ್ರಾಯೇಲರನ್ನು ಈಜಪ್ಟಿನಿಂದ ಹೊರಗೆ ಬರಮಾಡಿದವರನ್ನು ಕೊಂಡಾಡಿರಿ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.</verse>
				<verse number="12">ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ ಅವರನ್ನು ಹೊರತಂದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.</verse>
				<verse number="13">ಕೆಂಪು ಸಮುದ್ರವನ್ನು ವಿಭಾಗಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.</verse>
				<verse number="14">ಇಸ್ರಾಯೇಲನ್ನು ಅದರ ನಡುವೆ ದಾಟಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.</verse>
				<verse number="15">ಫರೋಹನನ್ನೂ, ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಕೆಡವಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.</verse>
				<verse number="16">ತಮ್ಮ ಜನರನ್ನು ಮರುಭೂಮಿಯಲ್ಲಿ ನಡೆಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.</verse>
				<verse number="17">ದೊಡ್ಡ ಅರಸರನ್ನು ದಂಡಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.</verse>
				<verse number="18">ಶ್ರೇಷ್ಠ ಅರಸರನ್ನು ಸಹ ದಂಡಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.</verse>
				<verse number="19">ಅಮೋರಿಯರ ಅರಸನಾದ ಸೀಹೋನನು ದಂಡನೆಹೊಂದಿದನು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.</verse>
				<verse number="20">ಬಾಷಾನಿನ ಅರಸನಾದ ಓಗನು ಸಂಹಾರವಾದ ಮತ್ತೊಬ್ಬನು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.</verse>
				<verse number="21">ಅವರ ದೇಶವನ್ನು ಬಾಧ್ಯತೆಯಾಗಿ ದೇವರು ಕೊಟ್ಟರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.</verse>
				<verse number="22">ತಮ್ಮ ಸೇವಕ ಇಸ್ರಾಯೇಲನಿಗೆ ಅದು ಸೊತ್ತಾಯಿತು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.</verse>
				<verse number="23">ನಾವು ಹೀನ ಸ್ಥಿತಿಯಲ್ಲಿದ್ದಾಗ ನಮ್ಮನ್ನು ನೆನಪಿಸಿಕೊಂಡರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.</verse>
				<verse number="24">ನಮ್ಮ ವೈರಿಗಳಿಂದ ನಮ್ಮನ್ನು ಬಿಡಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.</verse>
				<verse number="25">ಸಕಲ ಜೀವಿಗಳಿಗೂ ಆಹಾರವನ್ನು ಕೊಡುತ್ತಾರೆ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.</verse>
				<verse number="26">ಪರಲೋಕದ ದೇವರನ್ನು ಕೊಂಡಾಡಿರಿ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.</verse>
			</chapter>
			<chapter number="137">
				<verse number="1">ಬಾಬಿಲೋನಿನ ನದಿಗಳ ಹತ್ತಿರ ನಾವು ಕುಳಿತುಕೊಂಡು, ಚೀಯೋನನ್ನು ಜ್ಞಾಪಕ ಮಾಡಿಕೊಂಡಾಗ ಅತ್ತೆವು.</verse>
				<verse number="2">ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ ನಮ್ಮ ಕಿನ್ನರಿಗಳನ್ನು ತೂಗು ಹಾಕಿದೆವು.</verse>
				<verse number="3">ಏಕೆಂದರೆ ಅಲ್ಲಿ ನಮ್ಮನ್ನು ಸೆರೆಹಿಡಿದು ಬಂಧಿಸಿದವರು, ನಮಗೆ ಹಾಡನ್ನು ಹಾಡಲು ಹೇಳಿದ್ದರು; ನಮ್ಮನ್ನು ಪೀಡಿಸುವವರು ವಿನೋದಕ್ಕಾಗಿ ಹಾಡನ್ನು ಕೇಳಲು ಬಯಸಿದ್ದರು; “ಚೀಯೋನಿನ ಹಾಡುಗಳಲ್ಲಿ ಒಂದು ನಮಗೆ ಹಾಡಿರಿ,” ಎಂದರು.</verse>
				<verse number="4">ಅನ್ಯದೇಶದಲ್ಲಿ ನಾವು ಯೆಹೋವ ದೇವರ ಹಾಡುಗಳನ್ನು ಹಾಡುವುದು ಹೇಗೆ?</verse>
				<verse number="5">ಯೆರೂಸಲೇಮೇ, ನಾನು ನಿನ್ನನ್ನು ಮರೆತುಬಿಟ್ಟರೆ, ನನ್ನ ಬಲಗೈಯ ಕೌಶಲ್ಯ ಮರೆತು ಹೋಗಲಿ.</verse>
				<verse number="6">ನಾನು ನಿನ್ನನ್ನು ಜ್ಞಾಪಕಮಾಡಿಕೊಳ್ಳದಿದ್ದರೆ, ಯೆರೂಸಲೇಮನ್ನು ನನ್ನ ಎಲ್ಲಾ ಸಂತೋಷಕ್ಕಿಂತಲೂ ಹೆಚ್ಚಾಗಿಡದಿದ್ದರೆ, ನನ್ನ ನಾಲಿಗೆಯು ಸೇದಿಹೋಗಲಿ.</verse>
				<verse number="7">ಯೆರೂಸಲೇಮು ಬಿದ್ದುಹೋದ ದಿವಸದಲ್ಲಿ, “ಹಾಳುಮಾಡಿರಿ, ಅದರ ಅಸ್ತಿವಾರದವರೆಗೆ ಹಾಳುಮಾಡಿರಿ,” ಎಂದು ಹೇಳಿದ ಎದೋಮಿನವರನ್ನು ಯೆಹೋವ ದೇವರೇ ಜ್ಞಾಪಕಮಾಡಿಕೊಳ್ಳಿರಿ.</verse>
				<verse number="8">ಹಾಳಾಗಲಿಕ್ಕಿರುವ ಬಾಬಿಲೋನ್ ನಗರವೇ, ನೀನು ನಮಗೆ ಮಾಡಿದ್ದಕ್ಕೆ ಪ್ರತೀಕಾರವನ್ನು ನಿನಗೆ ಸಲ್ಲಿಸುವವನು ಧನ್ಯನು.</verse>
				<verse number="9">ನಿಮ್ಮ ಚಿಕ್ಕ ಕೂಸುಗಳನ್ನು ಹಿಡಿದು, ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.</verse>
			</chapter>
			<chapter number="138">
				<verse number="1">ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಕೊಂಡಾಡುವೆನು; ದೇವರುಗಳ ಮುಂದೆ ನಿಮ್ಮನ್ನು ಸ್ತುತಿಸುವೆನು.</verse>
				<verse number="2">ನಿಮ್ಮ ಪರಿಶುದ್ಧ ಮಂದಿರದ ಕಡೆಗೆ ಅಡ್ಡಬಿದ್ದು, ನಿಮ್ಮ ಒಡಂಬಡಿಕೆಯ ಪ್ರೀತಿ, ನಿಮ್ಮ ಸತ್ಯತೆಯ ನಿಮಿತ್ತ ನಿಮ್ಮ ಹೆಸರನ್ನು ಕೊಂಡಾಡುವೆನು; ನೀವು ನಿಮ್ಮ ವಾಕ್ಯವನ್ನು ನಿಮ್ಮ ಹೆಸರಿಗಿಂತಲೂ ಮಿಗಿಲಾಗಿ ಘನಪಡಿಸಿದ್ದೀರಿ.</verse>
				<verse number="3">ನಾನು ಕರೆದಾಗ ನೀವು ನನಗೆ ಉತ್ತರಕೊಟ್ಟಿರುವಿರಿ. ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು, ನನ್ನನ್ನು ಬಲಪಡಿಸಿದ್ದೀರಿ.</verse>
				<verse number="4">ಯೆಹೋವ ದೇವರೇ, ನಿಮ್ಮ ತೀರ್ಪುಗಳನ್ನು ಭೂಮಿಯ ಅರಸರೆಲ್ಲರೂ ಕೇಳುವಾಗ, ನಿಮ್ಮನ್ನು ಕೊಂಡಾಡಲಿ.</verse>
				<verse number="5">ಹೌದು, ಅವರು ಯೆಹೋವ ದೇವರ ಮಾರ್ಗಗಳ ಯೆಹೋವ ದೇವರ ಮಹಿಮೆಯು ಮಹೋನ್ನತವಾಗಿದೆ.</verse>
				<verse number="6">ಯೆಹೋವ ದೇವರು ಉನ್ನತರಾಗಿದ್ದರೂ, ದೀನನನ್ನು ಗಮನಿಸುತ್ತಾರೆ; ಆದರೆ ಗರ್ವಿಷ್ಠನನ್ನು ದೂರದಿಂದ ತಿಳಿದುಕೊಳ್ಳುತ್ತಾರೆ.</verse>
				<verse number="7">ನಾನು ಕಷ್ಟದ ಮಧ್ಯದಲ್ಲಿ ನಡೆದಾಗ್ಯೂ, ನೀವು ನನ್ನನ್ನು ಬದುಕಿಸಿ, ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿಮ್ಮ ಕೈಯನ್ನು ಚಾಚಿದ್ದೀರಿ; ನಿಮ್ಮ ಬಲಗೈಯಿಂದ ನನ್ನನ್ನು ರಕ್ಷಿಸಿದ್ದೀರಿ.</verse>
				<verse number="8">ಯೆಹೋವ ದೇವರು ನನ್ನ ನ್ಯಾಯವನ್ನು ಸಿದ್ಧಿಗೆ ತರುತ್ತಾರೆ; ಯೆಹೋವ ದೇವರೇ, ನಿಮ್ಮ ಪ್ರೀತಿಯು ಎಂದೆಂದಿಗೂ ಇರುವುದು; ನಿಮ್ಮ ಕೈಕೆಲಸಗಳನ್ನು ನೆರವೇರಿಸಿರಿ.</verse>
			</chapter>
			<chapter number="139">
				<verse number="1">ಯೆಹೋವ ದೇವರೇ, ನೀವು ನನ್ನನ್ನು ಪರಿಶೋಧಿಸಿದ್ದೀರಿ; ನನ್ನನ್ನು ತಿಳಿದುಕೊಂಡಿದ್ದೀರಿ.</verse>
				<verse number="2">ನಾನು ಕುಳಿತಿರುವುದನ್ನೂ, ಏಳುವುದನ್ನೂ ನೀವು ತಿಳಿದುಕೊಂಡಿದ್ದೀರಿ; ನನ್ನ ಆಲೋಚನೆಗಳನ್ನು ದೂರದಿಂದ ಗ್ರಹಿಸಿಕೊಂಡಿದ್ದೀರಿ.</verse>
				<verse number="3">ನಾನು ನಡೆಯುವುದನ್ನೂ, ನಾನು ಮಲಗುವುದನ್ನೂ ನೀವು ವಿವೇಚಿಸಿದ್ದೀರಿ; ನನ್ನ ಮಾರ್ಗಗಳೆಲ್ಲಾ ನಿಮಗೆ ಸುಪರಿಚಿತವಾಗಿವೆ.</verse>
				<verse number="4">ನನ್ನ ನಾಲಿಗೆಯಲ್ಲಿ ಒಂದು ಮಾತು ಆರಂಭಿಸುವುದಕ್ಕಿಂತ ಮುಂಚೆಯೇ ಯೆಹೋವ ದೇವರೇ, ಅದು ನಿಮಗೆ ಪೂರ್ಣವಾಗಿ ತಿಳಿದಿರುತ್ತದೆ.</verse>
				<verse number="5">ನೀವು ನನ್ನ ಹಿಂದೆಯೂ, ಮುಂದೆಯೂ ಆವರಿಸಿಕೊಂಡು, ನಿಮ್ಮ ಕೈಯನ್ನು ನನ್ನ ಮೇಲೆ ಇಟ್ಟಿದ್ದೀರಿ.</verse>
				<verse number="6">ಇಂಥ ಅರಿವು ನನಗೆ ಅತ್ಯಂತ ವಿಸ್ಮಯವಾಗಿದೆ, ಅದು ನನಗೆ ನಿಲುಕಲಾರದಷ್ಟು ಉನ್ನತವಾಗಿದೆ.</verse>
				<verse number="7">ನಾನು ನಿಮ್ಮ ಆತ್ಮದಿಂದ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿಮ್ಮ ಸನ್ನಿಧಿಯಿಂದ ತಪ್ಪಿಸಿಕೊಂಡು ನಾನು ಎಲ್ಲಿಗೆ ಹೊರಟು ಹೋಗಲಿ?</verse>
				<verse number="8">ನಾನು ಆಕಾಶಕ್ಕೆ ಏರಿ ಹೋದರೆ, ನೀವು ಅಲ್ಲಿ ಇದ್ದೀರಿ; ಪಾತಾಳಕ್ಕೆ ಹೋಗಿ ನಿದ್ರಿಸಿದರೂ ನೀವು ಅಲ್ಲಿಯೂ ಇದ್ದೀರಿ.</verse>
				<verse number="9">ಉದಯದ ರೆಕ್ಕೆಗಳನ್ನು ತೆಗೆದುಕೊಂಡು, ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ,</verse>
				<verse number="10">ಅಲ್ಲಿಯೂ ನಿಮ್ಮ ಕೈ ನನ್ನನ್ನು ನಡೆಸುವುದು, ನಿಮ್ಮ ಬಲಗೈ ನನ್ನನ್ನು ಹಿಡಿದಿರುವುದು.</verse>
				<verse number="11">“ಕತ್ತಲೆಯು ನನ್ನನ್ನು ಕವಿದುಕೊಳ್ಳಲಿ ಮತ್ತು ಬೆಳಕು ನನ್ನ ಸುತ್ತಲೂ ಇರುಳಾಗಲಿ,” ಎಂದು ನಾನು ಹೇಳಿದರೂ,</verse>
				<verse number="12">ಕತ್ತಲು ನಿಮಗೆ ಕತ್ತಲಾಗಿರುವುದಿಲ್ಲ; ರಾತ್ರಿಯು ಹಗಲಿನ ಹಾಗೆ ಪ್ರಕಾಶಿಸುವುದು, ಏಕೆಂದರೆ ಕತ್ತಲು ನಿಮಗೆ ಬೆಳಕಿನಂತಿರುವುದು.</verse>
				<verse number="13">ನನ್ನ ಅಂತರಾತ್ಮವನ್ನು ಉಂಟು ಮಾಡಿದವರು ನೀವೇ; ನನ್ನ ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವರು ನೀವೇ.</verse>
				<verse number="14">ನೀವು ನನ್ನನ್ನು ವಿಚಿತ್ರವಾಗಿಯೂ ವಿಸ್ಮಯವಾಗಿಯೂ ಸೃಷ್ಟಿಸಿದ್ದರಿಂದ ನಾನು ನಿಮ್ಮನ್ನು ಸ್ತುತಿಸುತ್ತೇನೆ; ನಿಮ್ಮ ಕೃತ್ಯಗಳು ಆಶ್ಚರ್ಯಕರವಾಗಿವೆ ಎಂದು, ನಾನು ಪೂರ್ಣವಾಗಿ ತಿಳಿದಿದ್ದೇನೆ.</verse>
				<verse number="15">ನೀವು ನನ್ನನ್ನು ಮರೆಯಲ್ಲಿ ರೂಪಿಸಿದಾಗಲೂ, ಭೂಗರ್ಭದಲ್ಲಿ ನನ್ನನ್ನು ರಚಿಸಿದಾಗಲೂ ನನ್ನ ಅಸ್ಥಿಪಂಜರವು ನಿಮಗೆ ಮರೆಯಾಗಿರಲಿಲ್ಲ.</verse>
				<verse number="16">ನಾನು ಇನ್ನೂ ಭ್ರೂಣವಾಗಿರುವಾಗಲೇ ನಿಮ್ಮ ಕಣ್ಣುಗಳು ನನ್ನನ್ನು ನೋಡಿದವು; ನೀವು ನನಗೆ ಅನುಮತಿಸಿರುವ ಪ್ರಥಮ ದಿನದಿಂದ ಕೊನೆಯದಿನದವರೆಗೆ ನನ್ನ ಎಲ್ಲಾ ದಿನಗಳೂ ನಿಮ್ಮ ಪುಸ್ತಕದಲ್ಲಿ ಬರೆಯಲಾಗಿವೆ.</verse>
				<verse number="17">ದೇವರೇ, ನಿಮ್ಮ ಆಲೋಚನೆಗಳು ನನಗೆ ಎಷ್ಟೋ ಅಮೂಲ್ಯವಾಗಿವೆ! ಅವುಗಳ ಎಣಿಕೆ ನನಗೆ ಎಷ್ಟೋ ಅಸಂಖ್ಯವಾಗಿವೆ!</verse>
				<verse number="18">ನಾನು ಅವುಗಳನ್ನು ಎಣಿಸಿದರೆ, ಅವು ಮರಳಿಗಿಂತಲೂ ಹೆಚ್ಚಾಗಿವೆ! ನಾನು ಎಚ್ಚರವಾಗುವಾಗ, ನಿಶ್ಚಯವಾಗಿಯೂ ನಿಮ್ಮ ಸಂಗಡ ಇರುವೆನು.</verse>
				<verse number="19">ದೇವರೇ, ಒಂದು ವೇಳೆ ನೀವು ದುಷ್ಟರೆಲ್ಲರನ್ನು ದಂಡಿಸಿಬಿಟ್ಟರೆ ಎಷ್ಟೋ ಒಳ್ಳೆಯದಾಗಿರುವುದು! ಕೊಲೆಪಾತಕರೇ, ನೀವು ನನ್ನಿಂದ ತೊಲಗಿ ಹೋದರೆ ಎಷ್ಟೋ ಹಿತ!</verse>
				<verse number="20">ಅವರು ನಿಮಗೆ ವಿರೋಧವಾಗಿ ಮಾತಾಡುತ್ತಾರೆ; ನಿಮ್ಮ ವೈರಿಗಳು ನಿಮ್ಮ ಹೆಸರನ್ನು ದುರುಪಯೋಗ ಮಾಡುತ್ತಾರೆ.</verse>
				<verse number="21">ಯೆಹೋವ ದೇವರೇ, ನಿಮ್ಮನ್ನು ದ್ವೇಷಿಸುವವರನ್ನು ನಾನು ದ್ವೇಷಿಸದಿರುವೆನೋ? ನಿಮಗೆ ವಿರೋಧವಾಗಿ ತಿರುಗಿ ಬಿದ್ದವರನ್ನು ನಾನು ಹೀನೈಸದಿರುವೆನೋ?</verse>
				<verse number="22">ನಾನು ಪೂರ್ಣ ದ್ವೇಷದಿಂದ ಅವರನ್ನು ಹಗೆಮಾಡುತ್ತೇನೆ; ನಾನು ಅವರನ್ನು ನನ್ನ ಶತ್ರುಗಳಂತೆ ಪರಿಗಣಿಸುತ್ತೇನೆ.</verse>
				<verse number="23">ದೇವರೇ, ನನ್ನನ್ನು ಪರಿಶೋಧಿಸಿ, ನನ್ನ ಹೃದಯವನ್ನು ತಿಳಿದುಕೊಳ್ಳಿರಿ; ನನ್ನನ್ನು ಪರೀಕ್ಷಿಸಿ, ನನ್ನ ಚಿಂತಾಲೋಚನೆಗಳನ್ನು ತಿಳಿದುಕೊಳ್ಳಿರಿ.</verse>
				<verse number="24">ನನ್ನಲ್ಲಿ ಕೇಡಿನ ಮಾರ್ಗವಿದೆಯೋ ಎಂದು ನೋಡಿರಿ, ನನ್ನನ್ನು ನಿತ್ಯ ಮಾರ್ಗದಲ್ಲಿ ನಡೆಸಿರಿ.</verse>
			</chapter>
			<chapter number="140">
				<verse number="1">ಯೆಹೋವ ದೇವರೇ, ಕೆಡುಕರಿಂದ ನನ್ನನ್ನು ತಪ್ಪಿಸಿರಿ, ಬಲಾತ್ಕಾರಿಗಳಿಂದ ನನ್ನನ್ನು ತಪ್ಪಿಸಿ ಕಾಪಾಡಿರಿ.</verse>
				<verse number="2">ಅವರು ಹೃದಯದಲ್ಲಿ ಕೇಡನ್ನು ಕಲ್ಪಿಸುತ್ತಾರೆ; ಅವರು ಪ್ರತಿದಿನ ಕಲಹವೆಬ್ಬಿಸುತ್ತಾರೆ.</verse>
				<verse number="3">ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ.</verse>
				<verse number="4">ಯೆಹೋವ ದೇವರೇ, ದುಷ್ಟರ ಕೈಗಳಿಂದ ನನ್ನನ್ನು ತಪ್ಪಿಸಿ ಕಾಯಿರಿ. ಹಿಂಸಕರಿಂದ ನನ್ನನ್ನು ರಕ್ಷಿಸು, ಅವರು ನನ್ನ ಮಾರ್ಗಗಳನ್ನು ಕೆಡಿಸುವುದಕ್ಕೆ ಉದ್ದೇಶಿಸುತ್ತಾರೆ.</verse>
				<verse number="5">ಗರ್ವಿಷ್ಠರು ನನಗೆ ಉರುಲನ್ನೂ, ಪಾಶಗಳನ್ನೂ ರಹಸ್ಯವಾಗಿ ಇಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನನಗೆ ಬೋನಿಟ್ಟಿದ್ದಾರೆ.</verse>
				<verse number="6">ನಾನು ಯೆಹೋವ ದೇವರಿಗೆ ಹೀಗೆ ಹೇಳಿದೆನು, “ನೀವು ನನ್ನ ದೇವರಾಗಿದ್ದೀರಿ; ಯೆಹೋವ ದೇವರೇ, ಕರುಣೆಗಾಗಿ ಬೇಡುವ ನನ್ನ ಮೊರೆಗೆ ಕಿವಿಗೊಡಿರಿ.</verse>
				<verse number="7">ನನ್ನ ರಕ್ಷಣೆಯ ಬಲವಾಗಿರುವ ಸಾರ್ವಭೌಮ ಯೆಹೋವ ದೇವರೇ, ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಕಾಪಾಡುತ್ತೀರಿ.</verse>
				<verse number="8">ಯೆಹೋವ ದೇವರೇ, ದುಷ್ಟರಿಗೆ ಅವರ ಇಷ್ಟಾರ್ಥವನ್ನು ಕೊಡಬೇಡಿರಿ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡಿರಿ.”</verse>
				<verse number="9">ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು, ಅವರ ತಲೆಯ ಮೇಲೇ ಬರಲಿ.</verse>
				<verse number="10">ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ, ಇತರರು ಅವರನ್ನು ಕುಣಿಯಲ್ಲಿ ಕೆಡವಲಿ.</verse>
				<verse number="11">ಚಾಡಿಕೋರರು ದೇಶದಲ್ಲಿ ಉಳಿಯದಿರಲಿ; ಬಲಾತ್ಕಾರಿಯನ್ನು ಕೇಡು ಬೇಟೆಯಾಡಿ ಕೆಡವಲಿ.</verse>
				<verse number="12">ಯೆಹೋವ ದೇವರು ಬಡವನಿಗೆ ವ್ಯಾಜ್ಯವನ್ನು, ಬಲಹೀನರಿಗೆ ನ್ಯಾಯವನ್ನೂ ತೀರಿಸುವರೆಂದೂ ನಾನು ಬಲ್ಲೆನು.</verse>
				<verse number="13">ನಿಶ್ಚಯವಾಗಿ ನೀತಿವಂತರು ನಿಮ್ಮ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿಮ್ಮ ಸನ್ನಿಧಿಯಲ್ಲಿ ಬಾಳುವರು.</verse>
			</chapter>
			<chapter number="141">
				<verse number="1">ಯೆಹೋವ ದೇವರೇ, ನಿಮಗೆ ಮೊರೆಯಿಡುತ್ತೇನೆ, ನನ್ನ ಬಳಿಗೆ ಬರಲು ತ್ವರೆಪಡಿರಿ. ನಾನು ನಿಮ್ಮನ್ನು ಕರೆಯುವಾಗ, ನನಗೆ ಕಿವಿಗೊಡಿರಿ.</verse>
				<verse number="2">ನನ್ನ ಪ್ರಾರ್ಥನೆ ನಿಮ್ಮ ಮುಂದೆ ಧೂಪವಾಗಿರಲಿ, ನಾನು ನಿಮ್ಮ ಕಡೆ ಕೈ ಎತ್ತುವುದು ಸಾಯಂಕಾಲದ ಬಲಿಯಂತೆ ನಿಮಗೆ ಸಮರ್ಪಕವಾಗಿರಲಿ.</verse>
				<verse number="3">ಯೆಹೋವ ದೇವರೇ, ನನ್ನ ಬಾಯಿಗೆ ಕಾವಲಿಡಿರಿ; ನನ್ನ ತುಟಿಗಳ ಕದವನ್ನು ಕಾಯಿರಿ;</verse>
				<verse number="4">ಅಪರಾಧ ಮಾಡುವವರ ಸಂಗಡ ನಾನು ಸಹ ಸೇರಿಕೊಂಡು ಕೆಟ್ಟ ಕಾರ್ಯಗಳನ್ನು ಮಾಡಲು ನನ್ನ ಹೃದಯ ಸೆಳೆಯದಂತೆ ಕಾಪಾಡಿರಿ; ಅವರ ಸವಿ ಊಟಗಳನ್ನು ನಾನು ಉಣ್ಣದಿರಲಿ.</verse>
				<verse number="5">ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ. ಅವರು ನನ್ನನ್ನು ಗದರಿಸಲಿ, ಅದು ನನ್ನ ತಲೆಗೆ ಅಭಿಷೇಕ; ನನ್ನ ತಲೆ ಅದನ್ನು ಬೇಡವೆನ್ನದಿರಲಿ; ಆದರೂ ನನ್ನ ಪ್ರಾರ್ಥನೆ ಯಾವಾಗಲೂ ದುಷ್ಟರ ಕಾರ್ಯಗಳಿಗೆ ವಿರೋಧವಾಗಿಯೇ ಇರುವುದು.</verse>
				<verse number="6">ಅವರ ನ್ಯಾಯಾಧಿಪತಿಗಳು ಉನ್ನತ ಸ್ಥಳದಿಂದ ಕೆಳಬಿದ್ದಾಗ ಅವರು ನನ್ನ ಮಾತು ಕೇಳುವರು.</verse>
				<verse number="7">ಅವರು ಹೀಗೆ ಹೇಳುವರು, “ಒಬ್ಬನು ಹೊಲವನ್ನು ಉತ್ತು, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ ನಮ್ಮ ಎಲುಬುಗಳು ಪಾತಾಳ ದ್ವಾರದಲ್ಲಿ ಎರಚಲಾಗುವುದು.”</verse>
				<verse number="8">ಆದರೆ ಸಾರ್ವಭೌಮ ಯೆಹೋವ ದೇವರೇ, ನನ್ನ ಕಣ್ಣುಗಳು ನಿಮ್ಮ ಕಡೆ ಇವೆ; ನಿಮ್ಮನ್ನು ಆಶ್ರಯಿಸಿಕೊಂಡಿದ್ದೇನೆ, ನನ್ನ ಪ್ರಾಣವನ್ನು ಮರಣಕ್ಕೆ ಒಪ್ಪಿಸಬೇಡಿರಿ.</verse>
				<verse number="9">ಅವರು ನನಗೆ ಒಡ್ಡಿದ ಉರುಲಿನಿಂದಲೂ, ಅಪರಾಧಗಳ ನೇಣುಗಳಿಂದಲೂ ನನ್ನನ್ನು ಕಾಪಾಡಿರಿ.</verse>
				<verse number="10">ನಾನು ತಪ್ಪಿಸಿಕೊಂಡು ಸುರಕ್ಷಿತವಾಗಿ ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿಯೇ ಬೀಳಲಿ.</verse>
			</chapter>
			<chapter number="142">
				<verse number="1">ನನ್ನ ಸ್ವರವೆತ್ತಿ ಯೆಹೋವ ದೇವರಿಗೆ ಮೊರೆಯಿಟ್ಟಿದ್ದೇನೆ; ಸ್ವರವೆತ್ತಿ ನನ್ನ ಯೆಹೋವ ದೇವರಿಗೆ ವಿಜ್ಞಾಪನೆ ಮಾಡಿದ್ದೇನೆ.</verse>
				<verse number="2">ದೇವರ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ದೇವರ ಮುಂದೆ ತಿಳಿಸಿದ್ದೇನೆ.</verse>
				<verse number="3">ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ, ದೇವರೇ ನೀವು ನನ್ನ ದಾರಿಯನ್ನು ಕಾಯುತ್ತೀರಿ; ನಾನು ನಡೆಯುವ ದಾರಿಯಲ್ಲಿ ವೈರಿಗಳು ಗುಪ್ತವಾಗಿ ನನಗೆ ಉರುಲನ್ನು ಒಡ್ಡಿದ್ದಾರೆ.</verse>
				<verse number="4">ನೋಡಿರಿ ನನ್ನ ಬಲಗಡೆಯಲ್ಲಿ, ನನ್ನ ಪರವಾಗಿ ಯಾರೂ ಇಲ್ಲ; ಆಶ್ರಯವು ನನಗೆ ಇಲ್ಲ; ನನಗಾಗಿ ಚಿಂತಿಸುವವರು ಯಾರೂ ಇಲ್ಲ.</verse>
				<verse number="5">ಯೆಹೋವ ದೇವರೇ, ನಿಮಗೆ ಹೀಗೆಂದು ಮೊರೆಯಿಡುತ್ತೇನೆ: “ನೀವು ನನ್ನ ಆಶ್ರಯವೂ, ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀರಿ.”</verse>
				<verse number="6">ನನ್ನ ಕೂಗನ್ನು ಆಲೈಸಿರಿ, ಏಕೆಂದರೆ ನಾನು ಬಹಳ ಕುಂದಿಹೋಗಿದ್ದೇನೆ; ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸಿರಿ, ಏಕೆಂದರೆ ಅವರು ನನಗಿಂತ ಬಲಿಷ್ಠರಾಗಿದ್ದಾರೆ.</verse>
				<verse number="7">ನಿಮ್ಮ ಹೆಸರನ್ನು ಕೊಂಡಾಡುವ ಹಾಗೆ ನನ್ನ ಸೆರೆಯಿಂದ ನನ್ನನ್ನು ಬಿಡಿಸಿರಿ; ಆಗ ನೀವು ನನಗೆ ಮಾಡಿದ ಉಪಕಾರವನ್ನು ಕಂಡು ನೀತಿವಂತರು ನನ್ನ ಹತ್ತಿರ ಸೇರಿಬರುವರು.</verse>
			</chapter>
			<chapter number="143">
				<verse number="1">ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ; ನನ್ನ ವಿಜ್ಞಾಪನೆಗಳಿಗೆ ಕಿವಿಗೊಡಿರಿ; ನಿಮ್ಮ ನಂಬಿಗಸ್ತಿಕೆಯಲ್ಲಿಯೂ, ನಿಮ್ಮ ನೀತಿಯಲ್ಲಿಯೂ ನನಗೆ ಉತ್ತರಕೊಡಿರಿ.</verse>
				<verse number="2">ನಿಮ್ಮ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡಿರಿ, ಏಕೆಂದರೆ ಜೀವಿಸುವರಲ್ಲಿ ಒಬ್ಬರೂ ನಿಮ್ಮ ಮುಂದೆ ನೀತಿವಂತರಲ್ಲ.</verse>
				<verse number="3">ಏಕೆಂದರೆ ಶತ್ರುವು ನನ್ನನ್ನು ಬೆನ್ನಟ್ಟಿ, ನಾನು ನೆಲಕಚ್ಚುವಂತೆ ಮಾಡಿದ್ದಾನೆ. ಬಹುಕಾಲದ ಹಿಂದೆ ಸತ್ತವರ ಹಾಗೆ ನನ್ನನ್ನು ಕತ್ತಲೆಯಲ್ಲಿ ವಾಸಿಸುವಂತೆ ಮಾಡಿದ್ದಾನೆ.</verse>
				<verse number="4">ನನ್ನ ಆತ್ಮವು ನನ್ನಲ್ಲಿ ಕುಂದಿಹೋಗಿದೆ; ನನ್ನೊಳಗೆ ನನ್ನ ಹೃದಯವು ಹಾಳಾಗಿದೆ.</verse>
				<verse number="5">ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು, ನಿಮ್ಮ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿಮ್ಮ ಕೈಕೆಲಸವನ್ನು ಆಲೋಚಿಸುತ್ತೇನೆ.</verse>
				<verse number="6">ನನ್ನ ಕೈಗಳನ್ನು ನಿಮ್ಮ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿಮಗಾಗಿ ದಾಹಗೊಂಡಿದೆ.</verse>
				<verse number="7">ಯೆಹೋವ ದೇವರೇ, ನನಗೆ ಬೇಗನೆ ಉತ್ತರಕೊಡಿರಿ; ನನ್ನ ಪ್ರಾಣವು ಕುಂದಿಹೋಗಿದೆ; ನಿಮ್ಮ ಮುಖವನ್ನು ನನಗೆ ಮರೆಮಾಡಬೇಡ; ಇಲ್ಲವಾದರೆ ಸಮಾಧಿಯಲ್ಲಿ ಇಳಿಯುವವರಿಗೆ ಸಮಾನನಾಗಿಬಿಡುತ್ತೇನೆ.</verse>
				<verse number="8">ಬೆಳಿಗ್ಗೆ ನಿಮ್ಮ ಒಡಂಬಡಿಕೆಯ ಪ್ರೀತಿಯು ನನಗೆ ವಾಕ್ಯವನ್ನು ತರಲಿ; ಏಕೆಂದರೆ ನಿಮ್ಮಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸಿರಿ, ಏಕೆಂದರೆ ನನ್ನ ಪ್ರಾಣವನ್ನು ನಿಮಗೇ ಒಪ್ಪಿಸಿದ್ದೇನೆ.</verse>
				<verse number="9">ಯೆಹೋವ ದೇವರೇ, ನನ್ನ ಶತ್ರುಗಳಿಂದ ನನ್ನನ್ನು ಬಿಡಿಸಿರಿ; ನಾನು ನಿಮ್ಮಲ್ಲಿ ಅಡಗಿಕೊಳ್ಳುವಂತೆ ನಿಮ್ಮ ಬಳಿಗೆ ಬಂದಿದ್ದೇನೆ.</verse>
				<verse number="10">ನಿಮ್ಮ ಚಿತ್ತದಂತೆ ಮಾಡುವುದಕ್ಕೆ ನನಗೆ ಬೋಧಿಸಿರಿ, ಏಕೆಂದರೆ ನೀವು ನನ್ನ ದೇವರು; ನಿಮ್ಮ ಒಳ್ಳೆಯ ಆತ್ಮವು ನನ್ನನ್ನು ಸಮಹಾದಿಯಲ್ಲಿ ನಡೆಸಲಿ.</verse>
				<verse number="11">ಯೆಹೋವ ದೇವರೇ, ನಿಮ್ಮ ಹೆಸರಿನ ನಿಮಿತ್ತ ನನ್ನನ್ನು ಜೀವಿಸಮಾಡಿರಿ, ನಿಮ್ಮ ನೀತಿಗನುಸಾರ ನನ್ನ ಪ್ರಾಣವನ್ನು ಇಕ್ಕಟ್ಟಿನೊಳಗಿಂದ ಬಿಡಿಸಿರಿ.</verse>
				<verse number="12">ನಿಮ್ಮ ಒಂಡಬಡಿಕೆಯ ಪ್ರೀತಿಯಿಂದ ನನ್ನ ಶತ್ರುಗಳನ್ನು ಸುಮ್ಮನಿರಿಸುವೆನು, ನನ್ನ ವೈರಿಗಳೆಲ್ಲರೂ ನಾಶವಾಗಲಿ, ನಾನು ನಿಮ್ಮ ಸೇವಕನಾಗಿದ್ದೇನೆ.</verse>
			</chapter>
			<chapter number="144">
				<verse number="1">ನನ್ನ ಬಲವಾಗಿರುವ ಯೆಹೋವ ದೇವರಿಗೆ ಸ್ತೋತ್ರವಾಗಲಿ. ದೇವರು ನನ್ನ ಕೈಗಳಿಗೆ ಕಾಳಗವನ್ನು, ನನ್ನ ಬೆರಳುಗಳಿಗೆ ಯುದ್ಧವಿದ್ಯೆಯನ್ನು ಕಲಿಸಿದ್ದಾರೆ.</verse>
				<verse number="2">ಅವರು ನನ್ನನ್ನು ಪ್ರೀತಿಸುವ ದೇವರು, ಅವರು ನನ್ನ ಕೋಟೆಯೂ, ನನ್ನ ಬಲವಾದ ಆಶ್ರಯವೂ, ನನ್ನನ್ನು ತಪ್ಪಿಸುವವರೂ, ನನ್ನ ಭರವಸೆಯೂ, ನನ್ನ ಗುರಾಣಿಯೂ, ಜನಾಂಗಗಳನ್ನು ನನಗೆ ವಶಮಾಡುವವರೂ ಆಗಿದ್ದಾರೆ.</verse>
				<verse number="3">ಯೆಹೋವ ದೇವರೇ, ನೀವು ಮಾನವನನ್ನು ಲಕ್ಷವಿಡುವ ಹಾಗೆ ಅವನು ಎಷ್ಟರವನು? ನೀವು ಅವನನ್ನು ನೆನಸುವ ಹಾಗೆ ಮಾನವನು ಎಷ್ಟರವನು?</verse>
				<verse number="4">ಮನುಷ್ಯನು ಕೇವಲ ಉಸಿರಿನಂತಿದ್ದಾನೆ; ಅವನ ದಿವಸಗಳು ಅಳಿದು ಹೋಗುವ ನೆರಳಿನ ಹಾಗಿವೆ.</verse>
				<verse number="5">ಯೆಹೋವ ದೇವರೇ, ನಿಮ್ಮ ಆಕಾಶಗಳನ್ನು ಒಡೆದು ಇಳಿದು ಬನ್ನಿರಿ; ಬೆಟ್ಟಗಳನ್ನು ಮುಟ್ಟಿರಿ, ಆಗ ಅವುಗಳಿಂದ ಹೊಗೆ ಹೊರಹೊಮ್ಮುವುದು.</verse>
				<verse number="6">ಮಿಂಚಿನಿಂದ ವೈರಿಗಳನ್ನು ಚದರಿಸಿರಿ. ನಿಮ್ಮ ಬಾಣಗಳನ್ನು ಎಸೆದು, ಅವರನ್ನು ದಂಡಿಸಿರಿ.</verse>
				<verse number="7">ನಿಮ್ಮ ಕೈಯನ್ನು ಉನ್ನತದಿಂದ ಚಾಚಿ, ಮಹಾ ಜಲದಿಂದಲೂ, ಪರದೇಶದವರ ಕೈಯಿಂದಲೂ ನನ್ನನ್ನು ತಪ್ಪಿಸಿರಿ, ನನ್ನನ್ನು ಬಿಡಿಸಿರಿ.</verse>
				<verse number="8">ಅವರ ಬಾಯಿ ಸುಳ್ಳನ್ನು ನುಡಿಯುತ್ತಿದೆ, ಅವರ ಬಲಗೈ ಮೋಸದ ಬಲಗೈ ಆಗಿದೆ.</verse>
				<verse number="9">ಓ ದೇವರೇ, ನಾನು ಹೊಸಹಾಡನ್ನು ನಿಮಗೆ ಹಾಡುವೆನು; ಹತ್ತು ತಂತಿಗಳ ವಾದ್ಯದಿಂದ ನಿಮ್ಮನ್ನು ಕೀರ್ತಿಸುವೆನು.</verse>
				<verse number="10">ಅರಸರಿಗೆ ಜಯವನ್ನು ಕೊಡುವ ದೇವರೇ, ನಿಮ್ಮ ಸೇವಕನಾದ ದಾವೀದನನ್ನೂ ಭಯಂಕರ ಖಡ್ಗದಿಂದ ಬಿಡಿಸಿದ್ದೀರಿ.</verse>
				<verse number="11">ಪರದೇಶದವರ ಕೈಯಿಂದ ನನ್ನನ್ನು ತಪ್ಪಿಸಿರಿ, ನನ್ನನ್ನು ಬಿಡಿಸಿರಿ; ಅವರ ಬಾಯಿ ವಂಚನೆಯನ್ನು ನುಡಿಯುತ್ತಿದೆ. ಅವರ ಬಾಯಿ ಸುಳ್ಳನ್ನೇ ನುಡಿಯುತ್ತಿದೆ.</verse>
				<verse number="12">ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ಯೌವನದಲ್ಲಿ ಉತ್ತಮವಾಗಿ ಬೆಳೆದವರಾಗಿರಲಿ; ನಮ್ಮ ಹೆಣ್ಣುಮಕ್ಕಳು ಅರಮನೆಯ ಶೃಂಗಾರಕ್ಕಾಗಿ ಕೆತ್ತಿದ ಸುಂದರ ಸ್ತಂಭಗಳ ಹಾಗಿರಲಿ.</verse>
				<verse number="13">ನಮ್ಮ ಉಗ್ರಾಣಗಳು ನಾನಾ ವಿಧವಾದ ಧಾನ್ಯಗಳನ್ನು ತುಂಬಿರಲಿ. ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ ನಮ್ಮ ಹೊಲಗಳಲ್ಲಿ ಹತ್ತು ಸಹಸ್ರವಾಗಿ ಹೆಚ್ಚಲಿ.</verse>
				<verse number="14">ನಮ್ಮ ಎತ್ತುಗಳು ಪ್ರಯಾಸ ಪಡುವುದಕ್ಕೆ ಬಲವುಳ್ಳವುಗಳಾಗಲಿ; ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಹಿಡಿಯುವುದಾಗಲಿ ಇರುವುದಿಲ್ಲ. ನಮ್ಮ ಬೀದಿಗಳಲ್ಲಿ ಗೋಳಾಟವು ಇಲ್ಲದಿರಲಿ.</verse>
				<verse number="15">ಹೀಗಿರುವ ಜನರು ಧನ್ಯರು; ಯೆಹೋವ ದೇವರು ಯಾರಿಗೆ ದೇವರಾಗಿದ್ದಾರೋ, ಅವರು ಧನ್ಯರು.</verse>
			</chapter>
			<chapter number="145">
				<verse number="1">ಅರಸರಾಗಿರುವ ನನ್ನ ದೇವರೇ, ನಿಮ್ಮನ್ನು ಘನಪಡಿಸುವೆನು; ನಿಮ್ಮ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.</verse>
				<verse number="2">ಪ್ರತಿದಿನ ನಿಮ್ಮನ್ನು ಸ್ತುತಿಸುವೆನು; ಎಂದೆಂದಿಗೂ ಸ್ತುತಿಸುವೆನು.</verse>
				<verse number="3">ಯೆಹೋವ ದೇವರು ಮಹೋನ್ನತರೂ, ಬಹುಸ್ತುತಿಪಾತ್ರರೂ ಆಗಿದ್ದಾರೆ. ಅವರ ಮಹತ್ವವು ಅಗಮ್ಯವಾದದ್ದು.</verse>
				<verse number="4">ದೇವರೇ ಒಂದು ತಲಾಂತರವು ಇನ್ನೊಂದು ತಲಾಂತರಕ್ಕೆ ನಿಮ್ಮ ಕೆಲಸಗಳನ್ನು ಪ್ರಕಟಿಸುತ್ತದೆ; ಜನರು ನಿಮ್ಮ ಪರಾಕ್ರಮಗಳನ್ನು ತಿಳಿಸುತ್ತಾರೆ.</verse>
				<verse number="5">ನಿಮ್ಮ ಘನತೆಯ ಪ್ರಭಾವದ ಮಹಿಮೆಗಳ ವಿಷಯವಾಗಿಯೂ ನಿಮ್ಮ ಅದ್ಭುತಕಾರ್ಯಗಳ ವಿಷಯವಾಗಿಯೂ ನಾನು ಧ್ಯಾನಿಸುತ್ತಿರುವೆನು,</verse>
				<verse number="6">ನಿಮ್ಮ ಅತಿಶಯ ಶಕ್ತಿಯ ವಿಷಯವಾಗಿ ಅವರು ಹೇಳುವರು; ನಿಮ್ಮ ಮಹಾಕಾರ್ಯವನ್ನು ನಾನು ಸಾರುವೆನು.</verse>
				<verse number="7">ನಿಮ್ಮ ಬಹು ಒಳ್ಳೆಯತನದ ಜ್ಞಾಪಕವನ್ನು ಅವರು ನುಡಿಯುವರು; ನಿಮ್ಮ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು.</verse>
				<verse number="8">ಯೆಹೋವ ದೇವರು ಕೃಪಾಳುವೂ, ಅನುಕಂಪವೂ, ದೀರ್ಘಶಾಂತಿಯೂ, ಪ್ರೀತಿ ಪೂರ್ಣರೂ ಆಗಿದ್ದಾರೆ.</verse>
				<verse number="9">ಯೆಹೋವ ದೇವರು ಸರ್ವರಿಗೂ ಒಳ್ಳೆಯವರು. ಅವರ ಅನುಕಂಪವು ತಮ್ಮ ಎಲ್ಲಾ ಸೃಷ್ಟಿಗಳ ಮೇಲೆ ಇದೆ.</verse>
				<verse number="10">ಯೆಹೋವ ದೇವರೇ, ನಿಮ್ಮ ನಂಬಿಗಸ್ತರು ನಿಮ್ಮನ್ನು ಸ್ತುತಿಸುವರು.</verse>
				<verse number="11">ನಿಮ್ಮ ರಾಜ್ಯದ ಮಹಿಮೆಯನ್ನು ಹೇಳುವರು; ನಿಮ್ಮ ಪರಾಕ್ರಮವನ್ನು ನುಡಿಯುವರು.</verse>
				<verse number="12">ಮಾನವರಿಗೆ ನಿಮ್ಮ ಪರಾಕ್ರಮ ಕ್ರಿಯೆಗಳನ್ನೂ, ನಿಮ್ಮ ರಾಜ್ಯದ ಪ್ರಭೆಯ ಘನವನ್ನೂ ತಿಳಿಯಪಡಿಸುವರು.</verse>
				<verse number="13">ನಿಮ್ಮ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿಮ್ಮ ಅಧಿಪತ್ಯವು ಎಲ್ಲಾ ತಲತಲಾಂತರಗಳಲ್ಲಿ ಇರುವುದು. ಯೆಹೋವ ದೇವರು ತಮ್ಮ ಎಲ್ಲಾ ಪ್ರತಿಜ್ಞೆಗಳಲ್ಲಿ ನಂಬಿಗಸ್ತರಾಗಿರುತ್ತಾರೆ. ಎಲ್ಲಾ ಕಾರ್ಯಗಳಲ್ಲಿಯೂ ಅವರ ಅನುಗ್ರಹ ಉಳಿದಿದೆ.</verse>
				<verse number="14">ಯೆಹೋವ ದೇವರು ಬೀಳುವವರೆಲ್ಲರನ್ನು ಉದ್ಧಾರ ಮಾಡುತ್ತಾರೆ. ತಗ್ಗಿಸಿಕೊಳ್ಳುವವರೆಲ್ಲರನ್ನು ಎತ್ತುತ್ತಾರೆ.</verse>
				<verse number="15">ದೇವರೇ, ಎಲ್ಲರ ಕಣ್ಣುಗಳು ನಿಮಗಾಗಿ ಕಾಯುತ್ತಿರುತ್ತವೆ. ನೀವು ಅವರಿಗೆ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುತ್ತೀರಿ.</verse>
				<verse number="16">ನಿಮ್ಮ ಕೈದೆರೆದು ಎಲ್ಲಾ ಜೀವಿಗಳ ಇಷ್ಟವನ್ನು ಪೂರೈಸುತ್ತೀರಿ.</verse>
				<verse number="17">ಯೆಹೋವ ದೇವರು ತಮ್ಮ ಎಲ್ಲಾ ಮಾರ್ಗಗಳಲ್ಲಿ ನೀತಿವಂತರೂ ತಮ್ಮ ಸೃಷ್ಟಿಗೆಲ್ಲಾ ಪ್ರೀತಿ ತೋರಿಸುವವರೂ ಆಗಿದ್ದಾರೆ.</verse>
				<verse number="18">ಯೆಹೋವ ದೇವರನ್ನು ಕರೆಯುವವರು ಯಥಾರ್ಥವಾಗಿ ಕರೆಯುವುದಾದರೆ, ಅವರು ಅವರಿಗೆ ಸಮೀಪವಾಗಿದ್ದಾರೆ.</verse>
				<verse number="19">ತಮಗೆ ಭಯಪಡುವವರ ಇಷ್ಟವನ್ನು ನೆರವೇರಿಸುತ್ತಾರೆ. ಅವರ ಮೊರೆಯನ್ನು ಕೇಳಿ, ಅವರನ್ನು ರಕ್ಷಿಸುತ್ತಾರೆ.</verse>
				<verse number="20">ಯೆಹೋವ ದೇವರು, ತಮ್ಮನ್ನು ಪ್ರೀತಿಸುವವರೆಲ್ಲರನ್ನು ಕಾಪಾಡುತ್ತಾರೆ. ಆದರೆ ದುಷ್ಟರೆಲ್ಲರನ್ನು ದಂಡಿಸುತ್ತಾರೆ.</verse>
				<verse number="21">ನನ್ನ ಬಾಯಿ ಯೆಹೋವ ದೇವರ ಸ್ತೋತ್ರವನ್ನು ನುಡಿಯಲಿ; ಸಮಸ್ತ ಜೀವಿಗಳು ಆತನ ಪರಿಶುದ್ಧವಾದ ಹೆಸರನ್ನು ಯುಗಯುಗಾಂತರಗಳಿಗೂ ಸ್ತುತಿಸಲಿ.</verse>
			</chapter>
			<chapter number="146">
				<verse number="1">ಯೆಹೋವ ದೇವರನ್ನು ಸ್ತುತಿಸಿರಿ. ನನ್ನ ಪ್ರಾಣವೇ, ಯೆಹೋವ ದೇವರನ್ನು ಸ್ತುತಿಸು.</verse>
				<verse number="2">ನಾನು ಬದುಕುವವರೆಗೂ ಯೆಹೋವ ದೇವರನ್ನು ಸ್ತುತಿಸುವೆನು; ನಾನು ಇರುವವರೆಗೂ ನನ್ನ ದೇವರನ್ನು ಸ್ತುತಿಸುವೆನು.</verse>
				<verse number="3">ಅಧಿಪತಿಗಳಲ್ಲಿಯೂ ರಕ್ಷಿಸಲಾಗದ ಮಾನವರಲ್ಲಿಯೂ ಭರವಸವಿಡಬೇಡಿರಿ.</verse>
				<verse number="4">ಅವರ ಶ್ವಾಸವು ಹೋಗಲು ಮಣ್ಣಿಗೆ ಸೇರುತ್ತಾರೆ, ಅದೇ ದಿವಸದಲ್ಲಿ ಅವರ ಆಲೋಚನೆಗಳೆಲ್ಲಾ ನಾಶವಾಗುತ್ತವೆ.</verse>
				<verse number="5">ಯಾಕೋಬನ ದೇವರನ್ನು ತಮ್ಮ ಸಹಾಯಕರಾಗಿ ಮಾಡಿಕೊಂಡವನು ಧನ್ಯನು; ಅವನು ತನ್ನ ದೇವರಾದ ಯೆಹೋವ ದೇವರ ಮೇಲೆ ನಿರೀಕ್ಷೆ ಇಡುವನು.</verse>
				<verse number="6">ಆಕಾಶವನ್ನೂ, ಭೂಮಿಯನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದ ದೇವರೇ ಎಂದೆಂದಿಗೂ ನಂಬಿಗಸ್ತರು.</verse>
				<verse number="7">ಅವರು ದಬ್ಬಾಳಿಕೆಯಾದ ನ್ಯಾಯತೀರಿಸುತ್ತಾರೆ, ಹಸಿದವರಿಗೆ ಆಹಾರವನ್ನು ಕೊಡುತ್ತಾರೆ. ಯೆಹೋವ ದೇವರು ಸೆರೆಯವರನ್ನು ಬಿಡಿಸುತ್ತಾರೆ.</verse>
				<verse number="8">ಯೆಹೋವ ದೇವರು ಕುರುಡರ ಕಣ್ಣುಗಳನ್ನು ತೆರೆಯುತ್ತಾರೆ. ಅವರು ದೀನರನ್ನು ಎತ್ತುತ್ತಾರೆ. ನೀತಿವಂತರನ್ನು ಪ್ರೀತಿಸುತ್ತಾರೆ.</verse>
				<verse number="9">ಯೆಹೋವ ದೇವರು ಪರದೇಶಸ್ಥರನ್ನು ಕಾಪಾಡುತ್ತಾರೆ. ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಉದ್ಧರಿಸುತ್ತಾರೆ. ಆದರೆ ದುಷ್ಟರ ಮಾರ್ಗವನ್ನು ಬೇಸರಪಡಿಸುತ್ತಾರೆ.</verse>
				<verse number="10">ಚೀಯೋನೇ, ನಿಮ್ಮ ದೇವರಾದ ಯೆಹೋವ ದೇವರು ತಲತಲಾಂತರಕ್ಕೂ, ಸರ್ವ ಸಂತತಿಗಳವರೆಗೂ ಆಳಿಕೆ ಮಾಡುತ್ತಾರೆ. ಯೆಹೋವ ದೇವರಿಗೆ ಸ್ತೋತ್ರ.</verse>
			</chapter>
			<chapter number="147">
				<verse number="1">ಯೆಹೋವ ದೇವರನ್ನು ಸ್ತುತಿಸಿರಿ. ಏಕೆಂದರೆ ನಮ್ಮ ದೇವರನ್ನು ಸ್ತುತಿಸುವುದು ಒಳ್ಳೆಯದು; ದೇವರನ್ನು ಸ್ತುತಿಸುವುದು ರಮ್ಯವೂ, ಯೋಗ್ಯವೂ ಆಗಿದೆ.</verse>
				<verse number="2">ಯೆಹೋವ ದೇವರು ಯೆರೂಸಲೇಮನ್ನು ಕಟ್ಟುತ್ತಾರೆ, ಚದರಿಹೋದ ಇಸ್ರಾಯೇಲನ್ನು ಕೂಡಿಸುತ್ತಾರೆ.</verse>
				<verse number="3">ದೇವರು ಮುರಿದ ಹೃದಯದವರನ್ನು ಸ್ವಸ್ಥಮಾಡಿ, ಅವರ ಗಾಯಗಳನ್ನು ಕಟ್ಟುತ್ತಾರೆ.</verse>
				<verse number="4">ದೇವರು ನಕ್ಷತ್ರಗಳ ಸಂಖ್ಯೆಯನ್ನು ನಿರ್ಧರಿಸುತ್ತಾರೆ; ಅವೆಲ್ಲವುಗಳನ್ನು ಅವುಗಳ ಹೆಸರಿನಿಂದ ಕರೆಯುತ್ತಾರೆ.</verse>
				<verse number="5">ನಮ್ಮ ಯೆಹೋವ ದೇವರು ದೊಡ್ಡವರು, ಬಹು ಶಕ್ತರು; ಅವರ ವಿವೇಕಕ್ಕೆ ಎಣೆಯಿಲ್ಲ.</verse>
				<verse number="6">ಯೆಹೋವ ದೇವರು ಸಾತ್ವಿಕರನ್ನು ಉದ್ಧರಿಸುತ್ತಾರೆ; ದುಷ್ಟರನ್ನು ದಂಡಿಸುತ್ತಾರೆ.</verse>
				<verse number="7">ಯೆಹೋವ ದೇವರಿಗೆ ಸ್ತೋತ್ರಗೀತೆ ಹಾಡಿರಿ, ನಮ್ಮ ದೇವರನ್ನು ಕಿನ್ನರಿಯಿಂದ ಸ್ತುತಿಸಿರಿ.</verse>
				<verse number="8">ದೇವರು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾರೆ; ಭೂಮಿಗೆ ಮಳೆಯನ್ನು ಸುರಿಸುತ್ತಾರೆ; ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾರೆ.</verse>
				<verse number="9">ದೇವರು ಪಶುಗಳಿಗೂ, ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾರೆ.</verse>
				<verse number="10">ಕುದುರೆಯ ಶಕ್ತಿಯಲ್ಲಿ ಅವರಿಗೆ ಇಷ್ಟವಿಲ್ಲ; ಶೂರನ ಕಾಲ್ಬಲವನ್ನು ಮೆಚ್ಚುವುದಿಲ್ಲ.</verse>
				<verse number="11">ಯೆಹೋವ ದೇವರು ತಮಗೆ ಭಯಪಡುವವರಲ್ಲಿ ಆನಂದಿಸುತ್ತಾರೆ, ತಮ್ಮ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರಲ್ಲಿ ಹರ್ಷಿಸುತ್ತಾರೆ.</verse>
				<verse number="12">ಯೆರೂಸಲೇಮೇ, ಯೆಹೋವ ದೇವರನ್ನು ಸ್ತುತಿಸು; ಚೀಯೋನೇ, ನಿಮ್ಮ ದೇವರನ್ನು ಸ್ತುತಿಸು.</verse>
				<verse number="13">ನಿಮ್ಮ ಬಾಗಿಲುಗಳ ಅಗುಳಿಗಳನ್ನು ಬಲಗೊಳಿಸಿ, ದೇವರು ನಿಮ್ಮ ಜನರನ್ನು ಆಶೀರ್ವದಿಸುತ್ತಾರೆ.</verse>
				<verse number="14">ದೇವರು ನಿಮ್ಮ ಮೇರೆಗಳನ್ನು ಸಮಾಧಾನಪಡಿಸುತ್ತಾರೆ; ಉತ್ತಮವಾದ ಗೋಧಿಯಿಂದ ನಿಮ್ಮನ್ನು ತೃಪ್ತಿಪಡಿಸುತ್ತಾರೆ.</verse>
				<verse number="15">ಆಜ್ಞೆಯನ್ನು ಭೂಮಿಗೆ ಕಳುಹಿಸುತ್ತಾರೆ; ದೇವರ ವಾಕ್ಯವು ಬಹು ತೀವ್ರವಾಗಿ ಓಡುತ್ತದೆ.</verse>
				<verse number="16">ದೇವರು ಹಿಮವನ್ನು ಉಣ್ಣೆಯ ಹಾಗೆ ಹರಡುತ್ತಾರೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ.</verse>
				<verse number="17">ದೇವರು ನೀರುಗಡ್ಡೆಯನ್ನು ಕಲ್ಲು ಹರಳುಗಳಂತೆ ಸುರಿದು ಹಾಕುತ್ತಾರೆ; ಅವರು ಕಳುಹಿಸುವ ಚಳಿಯ ಮುಂದೆ ಯಾರು ನಿಲ್ಲುವರು?</verse>
				<verse number="18">ದೇವರು ತಮ್ಮ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾರೆ; ದೇವರು ಗಾಳಿಯನ್ನು ಬೀಸುವಂತೆ ಮಾಡುತ್ತಾರೆ; ನೀರು ಹರಿಯುತ್ತದೆ.</verse>
				<verse number="19">ದೇವರು ಯಾಕೋಬ್ಯರಿಗೆ ತಮ್ಮ ವಾಕ್ಯವನ್ನು ಪ್ರಕಟಿಸುತ್ತಾರೆ, ಇಸ್ರಾಯೇಲರಿಗೆ ತಮ್ಮ ತೀರ್ಪುಗಳನ್ನೂ, ತನ್ನ ನ್ಯಾಯವಿಧಿಗಳನ್ನೂ ಪ್ರಕಟಿಸುತ್ತಾರೆ.</verse>
				<verse number="20">ಬೇರೆ ಯಾವ ಜನಾಂಗಕ್ಕಾದರೂ ದೇವರು ಹೀಗೆ ಮಾಡಲಿಲ್ಲ; ದೇವರ ನ್ಯಾಯವಿಧಿಗಳನ್ನು ಜನರು ತಿಳಿದುಕೊಳ್ಳುವುದಿಲ್ಲ. ಯೆಹೋವ ದೇವರನ್ನು ಸ್ತುತಿಸಿರಿ.</verse>
			</chapter>
			<chapter number="148">
				<verse number="1">ಯೆಹೋವ ದೇವರನ್ನು ಸ್ತುತಿಸಿರಿ. ಆಕಾಶ ಮಂಡಲದಿಂದ ಯೆಹೋವ ದೇವರಿಗೆ ಸ್ತುತಿ ಸಲ್ಲಲಿ! ಮಹೋನ್ನತದ ದೇವರನ್ನು ಸ್ತುತಿಸಿರಿ.</verse>
				<verse number="2">ದೇವರ ದೂತರುಗಳೇ, ದೇವರನ್ನು ಸ್ತುತಿಸಿರಿ; ದೇವರ ಪರಲೋಕದ ಎಲ್ಲಾ ಸೈನ್ಯಗಳೇ, ದೇವರನ್ನು ಸ್ತುತಿಸಿರಿ.</verse>
				<verse number="3">ಸೂರ್ಯ, ಚಂದ್ರರೇ, ದೇವರನ್ನು ಸ್ತುತಿಸಿರಿ; ಬೆಳಕುಳ್ಳ ಎಲ್ಲಾ ನಕ್ಷತ್ರಗಳೇ, ದೇವರನ್ನು ಸ್ತುತಿಸಿರಿ.</verse>
				<verse number="4">ಉನ್ನತ ಆಕಾಶಗಳೇ, ಆಕಾಶಗಳ ಮೇಲೆ ಇರುವ ಜಲಸಮೂಹವೇ, ದೇವರನ್ನು ಸ್ತುತಿಸಿರಿ.</verse>
				<verse number="5">ಯೆಹೋವ ದೇವರ ಹೆಸರನ್ನು ಅವು ಸ್ತುತಿಸಲಿ, ಏಕೆಂದರೆ ದೇವರು ಆಜ್ಞಾಪಿಸಲು, ಅವು ನಿರ್ಮಿಸಲಾದವು.</verse>
				<verse number="6">ಅವುಗಳನ್ನು ಯುಗ ಯುಗಗಳಿಗೂ ಸ್ಥಾಪಿಸಿದ್ದಾರೆ; ದೇವರು ತೀರ್ಪನ್ನು ಕೊಟ್ಟಿದ್ದಾರೆ, ಅದು ಮೀರಿ ಹೋಗುವುದಿಲ್ಲ.</verse>
				<verse number="7">ಭೂಮಿಯಿಂದ ಯೆಹೋವ ದೇವರನ್ನು ಸ್ತುತಿಸಿರಿ; ಎಲ್ಲಾ ಅಗಾಧಗಳೇ,</verse>
				<verse number="8">ಮಿಂಚೇ, ಕಲ್ಮಳೆಯೇ, ಹಿಮವೇ, ಹಬೆಯೇ, ದೇವರ ಮಾತನ್ನು ಕೇಳುವ ಬಿರುಗಾಳಿಯೇ,</verse>
				<verse number="9">ಬೆಟ್ಟಗಳೇ, ಎಲ್ಲಾ ಗುಡ್ಡಗಳೇ, ಹಣ್ಣಿನ ಮರಗಳೇ, ಎಲ್ಲಾ ದೇವದಾರುಗಳೇ,</verse>
				<verse number="10">ಕಾಡುಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ, ಹಾರುವ ಪಕ್ಷಿಗಳೇ,</verse>
				<verse number="11">ಭೂರಾಜರೇ, ಎಲ್ಲಾ ಪ್ರಜೆಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿಪತಿಗಳೇ,</verse>
				<verse number="12">ಪ್ರಾಯಸ್ಥರೇ, ಕನ್ಯೆಯರೇ, ಮಕ್ಕಳೇ, ವೃದ್ಧರೇ.</verse>
				<verse number="13">ಯೆಹೋವ ದೇವರ ಹೆಸರನ್ನು ಸ್ತುತಿಸಿರಿ; ಅವರ ಹೆಸರು ಮಾತ್ರ ಶ್ರೇಷ್ಠವಾಗಿದೆ; ಅವರ ಮಹಿಮೆಯು ಭೂಮ್ಯಾಕಾಶಗಳನ್ನು ಆವರಿಸಿದೆ.</verse>
				<verse number="14">ದೇವರು ತಮ್ಮ ಜನರ ಬಲವನ್ನು ಮೇಲಕ್ಕೆತ್ತಿದ್ದಾರೆ. ದೇವರ ಇಸ್ರಾಯೇಲರೆಲ್ಲರೂ, ಭಕ್ತರೆಲ್ಲರೂ, ದೇವರಿಗೆ ಸಮೀಪವಾದ ಜನರೂ ದೇವರನ್ನು ಕೊಂಡಾಡಿರಿ. ಯೆಹೋವ ದೇವರನ್ನು ಸ್ತುತಿಸಿರಿ.</verse>
			</chapter>
			<chapter number="149">
				<verse number="1">ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ, ಭಕ್ತರ ಸಭೆಯಲ್ಲಿ ದೇವರ ಸ್ತೋತ್ರವನ್ನೂ ಹಾಡಿರಿ.</verse>
				<verse number="2">ಇಸ್ರಾಯೇಲು ತನ್ನನ್ನು ಉಂಟುಮಾಡಿದ ದೇವರಲ್ಲಿ ಸಂತೋಷಿಸಲಿ; ಚೀಯೋನಿನ ಜನರು ತಮ್ಮ ಅರಸರಲ್ಲಿ ಉಲ್ಲಾಸಿಸಲಿ.</verse>
				<verse number="3">ದೇವರ ಹೆಸರನ್ನು ನರ್ತಿಸುತ್ತಾ ಸ್ತುತಿಸಲಿ; ದಮ್ಮಡಿಯಿಂದಲೂ ಕಿನ್ನರಿಯಿಂದಲೂ ದೇವರನ್ನು ಕೀರ್ತಿಸಲಿ.</verse>
				<verse number="4">ಏಕೆಂದರೆ ಯೆಹೋವ ದೇವರು ತಮ್ಮ ಜನರಲ್ಲಿ ಹರ್ಷಿಸುತ್ತಾರೆ. ದೀನರನ್ನು ಜಯದ ಕಿರೀಟದಿಂದ ಅಲಂಕರಿಸುತ್ತಾರೆ.</verse>
				<verse number="5">ಇಂಥಾ ಸನ್ಮಾನದಲ್ಲಿ ನಂಬಿಗಸ್ತರು ಸಂತೋಷಪಡಲಿ ಹಾಸಿಗೆಯಲ್ಲಿರುವಾಗಲೂ ಆನಂದಗಾನ ಹಾಡಲಿ.</verse>
				<verse number="6">ಉನ್ನತ ದೇವರ ಸ್ತೋತ್ರವು ಅವರ ಬಾಯಿಯಲ್ಲಿ ಇರಲಿ. ಇಬ್ಬಾಯಿ ಖಡ್ಗ ಅವರ ಕೈಯಲ್ಲಿಯೂ ಇರಲಿ.</verse>
				<verse number="7">ಜನಾಂಗಗಳಲ್ಲಿ ನ್ಯಾಯ ಪ್ರತೀಕಾರವಾಗಲಿ, ಅಪರಾಧಿಗಳಿಗೆ ಶಿಕ್ಷೆಯಾಗಲಿ.</verse>
				<verse number="8">ಅಪರಾಧದ ಅರಸರನ್ನು ಸಂಕೋಲೆಗಳಿಂದಲೂ, ಪ್ರಮುಖರನ್ನು ಕಬ್ಬಿಣದ ಬೇಡಿಗಳಿಂದಲೂ ಬಂಧಿಸಲಿ.</verse>
				<verse number="9">ಬರೆದಿರುವ ನ್ಯಾಯವಿಧಿಯು ಅವರಲ್ಲಿ ನೆರವೇರಲಿ, ದೇವರ ಭಕ್ತರೆಲ್ಲರಿಗೆ ಈ ಗೌರವವಿರುತ್ತದೆ. ಯೆಹೋವ ದೇವರನ್ನು ಸ್ತುತಿಸಿರಿ.</verse>
			</chapter>
			<chapter number="150">
				<verse number="1">ಯೆಹೋವ ದೇವರಿಗೆ ಸ್ತೋತ್ರ! ದೇವರನ್ನು ಅವರ ಪರಿಶುದ್ಧಾಲಯದಲ್ಲಿ ಸ್ತುತಿಸಿರಿ; ದೇವರ ಶಕ್ತಿದಾಯಕ ಆಕಾಶಮಂಡಲದಲ್ಲಿ ಅವರನ್ನು ಸ್ತುತಿಸಿರಿ.</verse>
				<verse number="2">ದೇವರ ಮಹತ್ಕಾರ್ಯಗಳಿಗಾಗಿ ಅವರನ್ನು ಸ್ತುತಿಸಿರಿ; ದೇವರ ಮಹಾಪ್ರಭಾವಗಳಿಗಾಗಿ ಅವರನ್ನು ಸ್ತುತಿಸಿರಿ.</verse>
				<verse number="3">ತುತೂರಿಯ ಶಬ್ದದಿಂದ ದೇವರನ್ನು ಸ್ತುತಿಸಿರಿ, ಕಿನ್ನರಿಯಿಂದಲೂ, ವೀಣೆಯಿಂದಲೂ, ಅವರನ್ನು ಸ್ತುತಿಸಿರಿ.</verse>
				<verse number="4">ದಮ್ಮಡಿಯಿಂದಲೂ, ನಾಟ್ಯದಿಂದಲೂ ದೇವರನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಅವರನ್ನು ಸ್ತುತಿಸಿರಿ.</verse>
				<verse number="5">ತಾಳಗಳಿಂದ ದೇವರನ್ನು ಸ್ತುತಿಸಿರಿ; ಪ್ರತಿಧ್ವನಿಸುವ ಝಲ್ಲರಿಗಳಿಂದಲೂ ಅವರನ್ನು ಸ್ತುತಿಸಿರಿ.</verse>
				<verse number="6">ಶ್ವಾಸವುಳ್ಳದ್ದೆಲ್ಲಾ ಯೆಹೋವ ದೇವರನ್ನು ಸ್ತುತಿಸಲಿ. ಯೆಹೋವ ದೇವರಿಗೆ ಸ್ತೋತ್ರ!</verse>
			</chapter>
		</book>
		<book number="20">
			<chapter number="1">
				<verse number="1">ಇಸ್ರಾಯೇಲರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಜ್ಞಾನೋಕ್ತಿಗಳು:</verse>
				<verse number="2">ಜನರು ಜ್ಞಾನವನ್ನೂ ಶಿಸ್ತನ್ನೂ ಪಡೆದುಕೊಳ್ಳುವುದಕ್ಕೆ; ವಿವೇಕದ ಮಾತುಗಳನ್ನು ಗ್ರಹಿಸುವುದಕ್ಕೆ;</verse>
				<verse number="3">ಅಂದರೆ, ಶಿಕ್ಷಣ, ವಿವೇಕ ನಡವಳಿ, ಸರಿಯಾದದ್ದನ್ನು ಮಾಡುವುದು ನ್ಯಾಯ ಮತ್ತು ಯುಕ್ತವಾದವುಗಳನ್ನು ನಡೆಸುವ ಜ್ಞಾನೋಕ್ತಿಗಳು;</verse>
				<verse number="4">ಮುಗ್ಧರಿಗೆ ವಿವೇಕವನ್ನೂ ಯೌವನಸ್ಥರಿಗೆ ತಿಳುವಳಿಕೆ ಹಾಗೂ ಸ್ವವಿವೇಚನೆಯನ್ನೂ ಕೊಡುವುದಕ್ಕಾಗಿ ಈ ಜ್ಞಾನೋಕ್ತಿಗಳಿವೆ.</verse>
				<verse number="5">ಜ್ಞಾನಿಯು ಜ್ಞಾನೋಕ್ತಿಗಳನ್ನು ಕೇಳಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲಿ; ವಿವೇಚಿಸುವವರು ಮಾರ್ಗದರ್ಶನವನ್ನು ಹೊಂದಿಕೊಳ್ಳಲಿ.</verse>
				<verse number="6">ಜ್ಞಾನೋಕ್ತಿಗಳನ್ನು, ಸಾಮ್ಯಗಳನ್ನು, ಜ್ಞಾನಿಗಳ ಮಾತು ಹಾಗೂ ಒಗಟುಗಳನ್ನು ಅರ್ಥಮಾಡಿಕೊಳ್ಳಲು ಇವು ಬರೆಯಲಾಗಿವೆ.</verse>
				<verse number="7">ಯೆಹೋವ ದೇವರ ಭಯವೇ ಜ್ಞಾನದ ಮೂಲವಾಗಿದೆ. ಆದರೆ ಮೂರ್ಖರು ಜ್ಞಾನವನ್ನೂ ಶಿಕ್ಷಣವನ್ನೂ ಅಸಡ್ಡೆ ಮಾಡುತ್ತಾರೆ.</verse>
				<verse number="8">ಮಗನೇ, ನಿನ್ನ ತಂದೆಯ ಶಿಕ್ಷಣಗಳನ್ನು ಕೇಳು, ನಿನ್ನ ತಾಯಿಯ ಉಪದೇಶವನ್ನು ತೊರೆಯಬೇಡ.</verse>
				<verse number="9">ಅವು ನಿನ್ನ ತಲೆಗೆ ಸುಂದರ ಕಿರೀಟ ನಿನ್ನ ಕೊರಳನ್ನು ಅಲಂಕರಿಸುವ ಹಾರ.</verse>
				<verse number="10">ಮಗನೇ, ಪಾಪಿಗಳು ನಿನ್ನನ್ನು ಸೆಳೆದರೆ ನೀನು ಒಪ್ಪಬೇಡ.</verse>
				<verse number="11">ಒಂದು ವೇಳೆ ಅವರು ನಿನಗೆ, “ನಮ್ಮೊಂದಿಗೆ ಬಾ, ಜನರ ರಕ್ತಕ್ಕಾಗಿ ಒಳಸಂಚು ಮಾಡೋಣ, ನಿರಪರಾಧಿಯ ರಕ್ತಕ್ಕಾಗಿ;</verse>
				<verse number="12">ಸಮಾಧಿಯು ನುಂಗುವಂತೆ ಜೀವಂತವಾಗಿ ಅವರನ್ನು ದಾಳಿಮಾಡೋಣ ಗುಂಡಿಯೊಳಕ್ಕೆ ಹೋಗುವವರನ್ನು ಸಂಪೂರ್ಣವಾಗಿ ನಾವು ಅವರನ್ನು ನುಂಗಿಬಿಡೋಣ.</verse>
				<verse number="13">ಅಮೂಲ್ಯವಾದ ಸೊತ್ತನ್ನೆಲ್ಲಾ ನಾವು ಕಂಡುಹಿಡಿದು ಕೊಳ್ಳೆಹೊಡೆದು ನಮ್ಮ ಮನೆಗಳನ್ನು ತುಂಬಿಕೊಳ್ಳೋಣ;</verse>
				<verse number="14">ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು, ನಾವೆಲ್ಲರೂ ಹಣಹಂಚಿಕೊಳ್ಳೋಣ,” ಎಂದು ಹೇಳುವುದಾದರೆ.</verse>
				<verse number="15">ಮಗನೇ, ಅವರೊಂದಿಗೆ ಸೇರಬೇಡ, ಅವರ ಮಾರ್ಗದಲ್ಲಿ ಹೆಜ್ಜೆಯಿಡಬೇಡ.</verse>
				<verse number="16">ಏಕೆಂದರೆ ಅವರ ಪಾದಗಳು ಕೇಡಿಗೆ ಓಡುತ್ತವೆ, ರಕ್ತಸುರಿಸುವುದಕ್ಕೆ ಆತುರಪಡುತ್ತವೆ.</verse>
				<verse number="17">ಪಕ್ಷಿಗಳ ಕಣ್ಣೆದುರಿಗೆ ಕಾಣುವಂತೆ ಬಲೆಯನ್ನು ಹರಡುವುದು ವ್ಯರ್ಥವಲ್ಲವೇ!</verse>
				<verse number="18">ಈ ಜನರು ಒಳಸಂಚು ಮಾಡುವುದು ತಮ್ಮ ಸ್ವಂತ ರಕ್ತಕ್ಕೆ. ಅವರು ಮಾಡುವ ದುರಾಲೋಚನೆ ಅವರನ್ನೇ ನಾಶಮಾಡುವುದು.</verse>
				<verse number="19">ಅಕ್ರಮ ಲಾಭದ ಬೆನ್ನಟ್ಟಿ ಹೋಗುವವರೆಲ್ಲರ ಗತಿ ಇದೇ. ಕೊಳ್ಳೆಯು ಕೊಳ್ಳೆಗಾರರ ಜೀವವನ್ನೇ ಕೊಳ್ಳೆಮಾಡುವದು.</verse>
				<verse number="20">ಜ್ಞಾನವೆಂಬಾಕೆಯು ಬೀದಿಯಲ್ಲಿ ಕೂಗುತ್ತಾಳೆ, ಬಹಿರಂಗ ಸ್ಥಳಗಳಲ್ಲಿ ಆಕೆಯು ತನ್ನ ಧ್ವನಿಗೈಯುತ್ತಾಳೆ.</verse>
				<verse number="21">ಜನಭರಿತ ಬೀದಿಗಳಲ್ಲಿ ಆಕೆ ಕರೆಯುತ್ತಾಳೆ, ಪಟ್ಟಣದ ಹೆಬ್ಬಾಗಿಲುಗಳಲ್ಲಿ ಹೀಗೆಂದು ಭಾಷಣ ಮಾಡುತ್ತಾಳೆ:</verse>
				<verse number="22">“ಮುಗ್ಧರೇ ನೀವು ಎಷ್ಟು ಕಾಲ ಮುಗ್ಧತೆಯನ್ನು ಪ್ರೀತಿಸುವಿರಿ. ಕುಚೋದ್ಯಗಾರರೇ ಎಷ್ಟು ಕಾಲ ಕುಚೋದ್ಯಗಾರರಾಗಿರಲು ಇಚ್ಛಿಸುವಿರಿ? ಜ್ಞಾನಹೀನರೇ, ಎಷ್ಟು ಕಾಲ ಪರಿಜ್ಞಾನವನ್ನು ಹಗೆ ಮಾಡುವಿರಿ?</verse>
				<verse number="23">ನನ್ನ ಗದರಿಕೆ ಕೇಳಿ ನೀವು ಪಶ್ಚಾತ್ತಾಪಪಡಿರಿ! ಆಗ ನಿಮ್ಮ ಮೇಲೆ ನನ್ನ ಆತ್ಮವನ್ನು ಸುರಿಸಿ, ನಿಮಗೆ ನನ್ನ ಬೋಧನೆಗಳನ್ನು ಪ್ರಕಟಿಸುವೆನು.</verse>
				<verse number="24">ನಾನು ಕರೆದಾಗ ನೀವು ನನ್ನನ್ನು ತಿರಸ್ಕರಿಸಿದ್ದೀರಿ ನಾನು ನನ್ನ ಕೈಚಾಚಿದಾಗ ಯಾರೂ ಮನುಷ್ಯನೂ ಗಮನಿಸಲಿಲ್ಲ.</verse>
				<verse number="25">ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ; ನನ್ನ ಗದರಿಕೆಯನ್ನು ನೀವು ಬೇಡವೆಂದು ತಳ್ಳಿಬಿಟ್ಟಿದ್ದರಿಂದ</verse>
				<verse number="26">ಬಿರುಗಾಳಿಯಂತೆ ನಿಮಗೆ ವಿಪತ್ತು ಬಂದಾಗ ನಾನು ನಗುವೆನು. ಆಪತ್ತು ನಿಮ್ಮನ್ನು ಹಿಂದಿಕ್ಕಿದಾಗ, ನಾನು ಪರಿಹಾಸ್ಯ ಮಾಡುವೆನು.</verse>
				<verse number="27">ಚಂಡಮಾರುತವು ನಿಮ್ಮನ್ನು ಬಿರುಗಾಳಿಯಂತೆ ತಾಕಿದಾಗ, ವಿಪತ್ತು ಸುಂಟರಗಾಳಿಯಂತೆ ನಿಮ್ಮ ಮೇಲೆ ಬೀಸಿದಾಗ, ಯಾತನೆ ಮತ್ತು ತೊಂದರೆ ನಿಮ್ಮನ್ನು ಆವರಿಸಿದಾಗಲೂ ಪರಿಹಾಸ್ಯಕ್ಕೆ ಒಳಗಾಗುವಿರಿ.</verse>
				<verse number="28">“ಆಗ ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರ ಕೊಡೆನು. ಅವರು ನನ್ನನ್ನು ಆತುರದಿಂದ ಹುಡುಕುವರು, ಆದರೆ ಅವರು ನನ್ನನ್ನು ಕಂಡುಕೊಳ್ಳುವುದಿಲ್ಲ.</verse>
				<verse number="29">ಏಕೆಂದರೆ ಅವರು ಅರಿವನ್ನು ಹಗೆಮಾಡಿ, ಯೆಹೋವ ದೇವರಿಗೆ ಭಯಪಡುವುದನ್ನು ಆರಿಸಿಕೊಳ್ಳದೆ ಹೋದರು.</verse>
				<verse number="30">ನನ್ನ ಬುದ್ಧಿವಾದವನ್ನು ಸ್ವೀಕರಿಸದೆ, ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದರು.</verse>
				<verse number="31">ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ, ತಮ್ಮ ಸ್ವಂತ ಕುಯುಕ್ತಿಗಳಿಂದಲೇ ಹೊಟ್ಟೆ ತುಂಬಿಕೊಳ್ಳುವರು.</verse>
				<verse number="32">ಮುಗ್ಧರ ದಾರಿತಪ್ಪುವಿಕೆಯು ಅವರನ್ನು ಕೊಲ್ಲುವುದು. ಜ್ಞಾನಹೀನರ ನಿಶ್ಚಿಂತೆಯು ಅವರನ್ನು ನಾಶಮಾಡುವುದು.</verse>
				<verse number="33">ನನಗೆ ಕಿವಿಗೊಡುವವರಾದರೋ ಸುರಕ್ಷಿತರಾಗಿ ಜೀವಿಸುವರು, ಕೇಡಿನ ಭಯವಿಲ್ಲದೇ ನೆಮ್ಮದಿಯಿಂದ ಇರುವರು.”</verse>
			</chapter>
			<chapter number="2">
				<verse number="1">ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ, ನನ್ನ ಆಜ್ಞೆಗಳನ್ನು ನಿನ್ನಲ್ಲಿ ಕಾದಿರಿಸು.</verse>
				<verse number="2">ನೀನು ಜ್ಞಾನಕ್ಕೆ ಕಿವಿಗೊಟ್ಟು, ತಿಳುವಳಿಕೆಗೆ ನಿನ್ನ ಹೃದಯವನ್ನು ತಿರುಗಿಸು,</verse>
				<verse number="3">ಹೌದು, ನೀನು ಒಳನೋಟಕ್ಕಾಗಿ ಮೊರೆಯಿಟ್ಟು, ತಿಳುವಳಿಕೆಗಾಗಿ ನಿನ್ನ ಸ್ವರವೆತ್ತಿ,</verse>
				<verse number="4">ಬೆಳ್ಳಿಯಂತೆ ನೀನು ಅದನ್ನು ಹಂಬಲಿಸಿದರೆ, ನಿಗೂಢ ನಿಕ್ಷೇಪದಂತೆ ನೀನು ಅದಕ್ಕಾಗಿ ಹುಡುಕಿದರೆ,</verse>
				<verse number="5">ಆಗ ನೀನು ಯೆಹೋವ ದೇವರ ಭಯಭಕ್ತಿಯನ್ನು ತಿಳಿದುಕೊಳ್ಳುವೆ; ದೇವರ ಅರಿವನ್ನು ಕಂಡುಕೊಳ್ಳುವೆ.</verse>
				<verse number="6">ಏಕೆಂದರೆ ಯೆಹೋವ ದೇವರೇ ಜ್ಞಾನವನ್ನು ಕೊಡುತ್ತಾರೆ; ಅವರ ಬಾಯಿಂದಲೇ ಅರಿವೂ ತಿಳುವಳಿಕೆಯೂ ಹೊರಟುಬರುತ್ತವೆ.</verse>
				<verse number="7">ನೀತಿವಂತರಿಗೋಸ್ಕರ ದೇವರು ಸುಜ್ಞಾನವನ್ನು ಕೂಡಿಸಿಡುವರು, ನಿರ್ದೋಷಿಯಾಗಿ ನಡೆದುಕೊಳ್ಳುವವರಿಗೆ ದೇವರು ಗುರಾಣಿಯಾಗಿದ್ದಾರೆ.</verse>
				<verse number="8">ನ್ಯಾಯವಂತರ ದಾರಿಗಳನ್ನು ದೇವರು ಕಾಯುತ್ತಾರೆ; ತಮ್ಮ ನಂಬಿಗಸ್ತರ ಮಾರ್ಗವನ್ನು ಭದ್ರಪಡಿಸುತ್ತಾರೆ.</verse>
				<verse number="9">ಆಗ ನೀನು ಸರಿಯಾದದ್ದನ್ನೂ ನ್ಯಾಯವನ್ನೂ ಯುಕ್ತವಾದದ್ದನ್ನು ಅರ್ಥಮಾಡಿಕೊಳ್ಳುವೆ, ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದುಕೊಳ್ಳುವೆ.</verse>
				<verse number="10">ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿಸಿ, ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಹಿತಕರವಾಗಿರುವುದು.</verse>
				<verse number="11">ನಿನ್ನ ವಿವೇಚನೆಯು ನಿನ್ನನ್ನು ಭದ್ರವಾಗಿ ಕಾಯುವುದು; ತಿಳುವಳಿಕೆಯು ನಿನ್ನನ್ನು ಕಾಪಾಡುವುದು.</verse>
				<verse number="12">ಜ್ಞಾನವು ದುಷ್ಟರ ಮಾರ್ಗಗಳಿಂದಲೂ, ವಕ್ರರ ಮಾತುಗಳಿಂದಲೂ ಕಾಪಾಡುವುದು.</verse>
				<verse number="13">ಅವರು ಕತ್ತಲೆಯ ಹಾದಿಗಳಲ್ಲಿ ನಡೆಯುವುದಕ್ಕೆ ನೇರವಾದ ದಾರಿಗಳನ್ನು ತೊರೆದುಬಿಡುತ್ತಾರೆ.</verse>
				<verse number="14">ಅವರು ಕೆಟ್ಟದ್ದನ್ನು ಮಾಡುವುದಕ್ಕೆ ಸಂತೋಷಿಸುತ್ತಾರೆ. ಕೇಡಿನ ವಕ್ರತನದಲ್ಲಿ ಆನಂದಿಸುತ್ತಾರೆ.</verse>
				<verse number="15">ಅವರ ಮಾರ್ಗಗಳು ವಕ್ರವಾಗಿವೆ; ತಮ್ಮ ನಡತೆಗಳಲ್ಲಿ ಅವರು ತಪ್ಪಿಹೋಗಿದ್ದಾರೆ.</verse>
				<verse number="16">ಜಾರಿಣಿಯಿಂದಲೂ ದಾರಿತಪ್ಪಿದ ಪರಸ್ತ್ರೀಯ ವಶೀಕರಣದ ಮಾತುಗಳಿಂದಲೂ ಜ್ಞಾನವು ನಿನ್ನನ್ನು ರಕ್ಷಿಸುವುದು.</verse>
				<verse number="17">ಅವಳು ತನ್ನ ಯೌವನ ಕಾಲದ ಪತಿಯನ್ನು ತ್ಯಜಿಸಿದ್ದಾಳೆ, ದೇವರ ಸನ್ನಿಧಿಯಲ್ಲಿ ಮಾಡಿಕೊಂಡ ಒಡಂಬಡಿಕೆಯನ್ನೂ ಕಡೆಗಣಿಸಿದ್ದಾಳೆ.</verse>
				<verse number="18">ಏಕೆಂದರೆ ಅವಳ ಮನೆ ಮರಣ ಮಾರ್ಗ. ಅವಳ ದಾರಿ ಮೃತರ ಕಡೆಗೂ ನಡೆಸುತ್ತವೆ.</verse>
				<verse number="19">ಅವಳ ಬಳಿಗೆ ಹೋಗುವ ಯಾವನೂ ಹಿಂದಿರುಗುವುದಿಲ್ಲ; ಜೀವಮಾರ್ಗಗಳನ್ನು ಅಂಥವರು ಹಿಡಿಯುವುದೇ ಇಲ್ಲ.</verse>
				<verse number="20">ಆದ್ದರಿಂದ ಒಳ್ಳೆಯವರ ಮಾರ್ಗದಲ್ಲಿ ನೀನು ನಡೆಯುವೆ ನೀತಿವಂತರ ದಾರಿಯನ್ನು ನೀನು ಹಿಡಿಯುವೆ.</verse>
				<verse number="21">ಏಕೆಂದರೆ ಪ್ರಾಮಾಣಿಕರು ದೇಶದಲ್ಲಿ ವಾಸಿಸುವರು, ನಿರ್ದೋಷಿಗಳು ಅದರಲ್ಲಿ ನೆಲೆಯಾಗಿ ಇರುವರು.</verse>
				<verse number="22">ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲಾಗುವರು; ದ್ರೋಹಿಗಳು ಬೇರುಸಹಿತವಾಗಿ ಕಿತ್ತುಹಾಕಲಾಗುವರು.</verse>
			</chapter>
			<chapter number="3">
				<verse number="1">ಮಗನೇ, ನನ್ನ ಉಪದೇಶವನ್ನು ಮರೆಯಬೇಡ; ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.</verse>
				<verse number="2">ಏಕೆಂದರೆ ಅವು ನಿನ್ನ ದಿನಗಳನ್ನು ಹೆಚ್ಚಿಸಿ ದೀರ್ಘಾಯುಷ್ಯವನ್ನು ನೀಡುವುದು, ಸಮಾಧಾನವನ್ನೂ ಸಮೃದ್ಧಿಯನ್ನೂ ನಿನಗೆ ಕೊಡುವುದು.</verse>
				<verse number="3">ಪ್ರೀತಿ, ನಂಬಿಗಸ್ತಿಕೆಗಳು ನಿನ್ನನ್ನು ಬಿಡದಿರಲಿ; ಅವು ನಿನ್ನ ಕೊರಳಿನ ಸುತ್ತಲೂ ಕಟ್ಟಿರಲಿ, ನಿನ್ನ ಹೃದಯದ ಹಲಗೆಯ ಮೇಲೆ ಅವು ಬರೆದಿರಲಿ.</verse>
				<verse number="4">ಆಗ ದೇವರ ಮುಂದೆಯೂ ಮನುಷ್ಯರ ಮುಂದೆಯೂ ದಯೆಯನ್ನೂ, ಒಳ್ಳೆಯ ಹೆಸರನ್ನೂ ನೀನು ಪಡೆದುಕೊಳ್ಳುವೆ.</verse>
				<verse number="5">ಪೂರ್ಣಹೃದಯದಿಂದ ಯೆಹೋವ ದೇವರಲ್ಲಿ ಭರವಸೆ ಇಡು ನಿನ್ನ ಸ್ವಂತ ಬುದ್ಧಿಯ ಮೇಲೆಯೇ ಆಧಾರಗೊಳ್ಳಬೇಡ.</verse>
				<verse number="6">ನಿನ್ನ ಎಲ್ಲಾ ಮಾರ್ಗಗಳಲ್ಲಿ ದೇವರಿಗೆ ಅಧೀನವಾಗಿರು. ಆಗ ದೇವರು ನಿನ್ನ ಮಾರ್ಗಗಳನ್ನು ಸರಾಗ ಮಾಡುವರು.</verse>
				<verse number="7">ನಿನ್ನ ದೃಷ್ಟಿಯಲ್ಲಿ ನೀನೇ ಜ್ಞಾನಿ ಎಂದು ಇರಬೇಡ; ಯೆಹೋವ ದೇವರಿಗೆ ಭಯಪಟ್ಟು, ಕೆಟ್ಟದ್ದನ್ನು ತೊರೆದುಬಿಡು.</verse>
				<verse number="8">ನಿನ್ನ ದೇಹಕ್ಕೆ ಅದು ಆರೋಗ್ಯವನ್ನು ತರುವುದು; ನಿನ್ನ ಎಲುಬುಗಳಿಗೆ ಅದು ಪೋಷಣೆಯನ್ನೂ ತರುವುದು.</verse>
				<verse number="9">ನಿನ್ನ ಆಸ್ತಿಯಿಂದಲೂ ನಿನ್ನ ಎಲ್ಲಾ ಬೆಳೆಯ ಪ್ರಥಮ ಫಲದಿಂದಲೂ ಯೆಹೋವ ದೇವರನ್ನು ಸನ್ಮಾನಿಸು.</verse>
				<verse number="10">ಆಗ ನಿನ್ನ ಕಣಜಗಳು ಸಮೃದ್ಧಿಯಿಂದ ತುಂಬುವವು; ಹೊಸ ದ್ರಾಕ್ಷಾರಸದಿಂದ ನಿನ್ನ ತೊಟ್ಟಿಗಳು ತುಂಬಿರುವುದು.</verse>
				<verse number="11">ಮಗನೇ, ಯೆಹೋವ ದೇವರ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಅವರು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.</verse>
				<verse number="12">ಏಕೆಂದರೆ ತಂದೆಯು ತನ್ನ ಮುದ್ದುಮಗನನ್ನು ಶಿಕ್ಷಿಸುವಂತೆ, ಯೆಹೋವ ದೇವರು ಯಾರನ್ನು ಪ್ರೀತಿಸುತ್ತಾರೋ, ಅವರನ್ನು ಶಿಸ್ತುಗೊಳಿಸುವರು.</verse>
				<verse number="13">ಜ್ಞಾನವನ್ನು ಕಂಡುಕೊಳ್ಳುವವನು ಧನ್ಯನು, ವಿವೇಕವನ್ನು ಸಂಪಾದಿಸಿಕೊಳ್ಳುವವನೂ ಧನ್ಯನು.</verse>
				<verse number="14">ಏಕೆಂದರೆ ಜ್ಞಾನವು ಬೆಳ್ಳಿಗಿಂತ ಹೆಚ್ಚು ಲಾಭವೂ; ಬಂಗಾರಕ್ಕಿಂತ ಹೆಚ್ಚು ಆದಾಯವನ್ನು ಕೊಡುವುದು.</verse>
				<verse number="15">ಜ್ಞಾನವು ಮಾಣಿಕ್ಯಗಳಿಗಿಂತಲೂ ಬಹು ಅಮೂಲ್ಯ; ನಿನ್ನ ಇಷ್ಟ ವಸ್ತುಗಳೆಲ್ಲವೂ ಅದಕ್ಕೆ ಸಮವಾಗುವುದಿಲ್ಲ.</verse>
				<verse number="16">ಜ್ಞಾನದ ಬಲಗೈಯಲ್ಲಿ ದೀರ್ಘಾಯುಷ್ಯವಿದೆ; ಎಡಗೈಯಲ್ಲಿ ಐಶ್ವರ್ಯವೂ ಘನತೆಯೂ ಇವೆ.</verse>
				<verse number="17">ಜ್ಞಾನದ ಮಾರ್ಗಗಳು ಸಂತೋಷಕರ; ಅದರ ದಾರಿಗಳೆಲ್ಲಾ ಶಾಂತಿಯ ದಾರಿಗಳೇ.</verse>
				<verse number="18">ಜ್ಞಾನವನ್ನು ಹಿಡಿದುಕೊಳ್ಳುವವರಿಗೆ ಜ್ಞಾನವು ಜೀವವೃಕ್ಷವಾಗಿದೆ; ಅದನ್ನು ಭದ್ರವಾಗಿ ಇಟ್ಟುಕೊಳ್ಳುವವರು ಧನ್ಯರು.</verse>
				<verse number="19">ಯೆಹೋವ ದೇವರು ಜ್ಞಾನದಿಂದ ಭೂಮಿಯನ್ನು ಸ್ಥಾಪಿಸಿದರು, ತಮ್ಮ ತಿಳುವಳಿಕೆಯ ಮೂಲಕ ಅವರು ಆಕಾಶಗಳನ್ನು ಸ್ಥಿರಪಡಿಸಿದರು.</verse>
				<verse number="20">ದೇವರು ತಮ್ಮ ಅರಿವಿನಿಂದಲೇ ಸೆಲೆಗಳು ಒಡೆದು, ಮೇಘಗಳು ಇಬ್ಬನಿಯನ್ನು ಸುರಿಸುತ್ತವೆ.</verse>
				<verse number="21">ಮಗನೇ, ಜ್ಞಾನವನ್ನೂ ತಿಳುವಳಿಕೆಯನ್ನೂ ಕಾಪಾಡಿಕೋ, ನಿನ್ನ ಕಣ್ಣುಗಳಿಂದ ಅವು ತಪ್ಪಿಹೋಗದೆ ಇರಲಿ.</verse>
				<verse number="22">ಅವು ನಿನಗೆ ಜೀವವಾಗಿರಲಿ. ನಿನ್ನ ಕೊರಳಿಗೆ ಆಭರಣವೂ ಆಗಿರುವುವು.</verse>
				<verse number="23">ಆಗ ನಿನ್ನ ಮಾರ್ಗದಲ್ಲಿ ಸುರಕ್ಷಿತವಾಗಿರುವೆ; ನೀನು ಎಡವದೆ ನಡೆಯುವೆ.</verse>
				<verse number="24">ನೀನು ಮಲಗುವಾಗ ನಿನಗೆ ಹೆದರಿಕೆ ಇರುವುದಿಲ್ಲ; ನೀನು ಮಲಗಿದಾಗ ನಿದ್ರೆಯು ಸುಖವಾಗಿರುವುದು.</verse>
				<verse number="25">ಆಕಸ್ಮಿಕ ವಿಪತ್ತಿಗೆ ನೀನು ಅಂಜುವುದಿಲ್ಲ; ದುಷ್ಟರ ಮೇಲೆ ಬರುವ ನಾಶನಕ್ಕೂ ನೀನು ಭಯಪಡದಿರುವೆ.</verse>
				<verse number="26">ಏಕೆಂದರೆ ಯೆಹೋವ ದೇವರೇ ನಿನಗೆ ಭರವಸೆ ಆಗಿದ್ದಾರೆ, ನಿನ್ನ ಪಾದವು ಉರುಲಿಗೆ ಸಿಕ್ಕದಂತೆ ಅವರು ಕಾಪಾಡುವರು.</verse>
				<verse number="27">ನಿನಗೆ ಶಕ್ತಿಯಿರುವಾಗಲೇ ಇತರರಿಗೆ ಉಪಕಾರಮಾಡು ಒಳಿತು ಮಾಡುವುದನ್ನು ನಿನ್ನಲ್ಲಿಯೇ ಇಟ್ಟುಕೊಳ್ಳಬೇಡ.</verse>
				<verse number="28">ಕೊಡತಕ್ಕದ್ದು ಈಗಾಗಲೇ ನಿನ್ನಲ್ಲಿರುವಾಗ, “ಹೋಗಿ ಬಾ, ನಾಳೆ ನಿನಗೆ ಕೊಡುತ್ತೇನೆ,” ಎಂದು ನಿನ್ನ ನೆರೆಯವನಿಗೆ ಹೇಳಬೇಡ.</verse>
				<verse number="29">ನಿನ್ನ ನೆರೆಯವನು ಭರವಸೆಯಿಂದ ನಿನ್ನ ಪಕ್ಕದಲ್ಲಿ ವಾಸಮಾಡುತ್ತಿರುವಾಗ, ಅವನಿಗೆ ವಿರೋಧವಾಗಿ ಕೇಡನ್ನು ಕಲ್ಪಿಸಬೇಡ.</verse>
				<verse number="30">ಒಬ್ಬನು ನಿನಗೆ ಯಾವ ತೊಂದರೆ ಮಾಡದಿದ್ದರೆ, ಅವನೊಂದಿಗೆ ಕಾರಣವಿಲ್ಲದೆ ದೂರು ನುಡಿಯಬೇಡ.</verse>
				<verse number="31">ಬಲಾತ್ಕಾರಿಯ ವಿಷಯದಲ್ಲಿ ನೀನು ಹೊಟ್ಟೆಕಿಚ್ಚುಪಡಬೇಡ; ಅವನ ಮಾರ್ಗಗಳಲ್ಲಿ ಯಾವುದನ್ನೂ ನೀನು ಆರಿಸಿಕೊಳ್ಳಬೇಡ.</verse>
				<verse number="32">ಏಕೆಂದರೆ ವಕ್ರಬುದ್ಧಿ ಯೆಹೋವ ದೇವರಿಗೆ ಅಸಹ್ಯ; ಆದರೆ ದೇವರ ನಂಬಿಗಸ್ತಿಕೆ ನೀತಿವಂತರೊಂದಿಗೆ ಇದೆ.</verse>
				<verse number="33">ದುಷ್ಟರ ಮನೆಯ ಮೇಲೆ ದೈವಶಾಪವಿದೆ. ಆದರೆ ನೀತಿವಂತರ ನಿವಾಸದ ಮೇಲೆ ದೈವಾಶೀರ್ವಾದವಿರುವುದು.</verse>
				<verse number="34">ದೇವರು ಗರ್ವಿಷ್ಠ ಪರಿಹಾಸ್ಯಗಾರರನ್ನು ಪರಿಹಾಸ್ಯ ಮಾಡುತ್ತಾರೆ; ದೀನರಿಗಾದರೋ ದೇವರು ಕೃಪೆಯನ್ನು ಕೊಡುತ್ತಾರೆ.</verse>
				<verse number="35">ಜ್ಞಾನಿಗಳು ಸನ್ಮಾನಕ್ಕೆ ಬಾಧ್ಯನಾಗುವರು; ಆದರೆ ಜ್ಞಾನಹೀನರ ಪ್ರತಿಫಲವು ಅವಮಾನವೆ.</verse>
			</chapter>
			<chapter number="4">
				<verse number="1">ಮಕ್ಕಳೇ, ತಂದೆಯ ಶಿಕ್ಷಣವನ್ನು ಕೇಳಿರಿ; ತಿಳುವಳಿಕೆಯನ್ನು ಗ್ರಹಿಸಲಿಕ್ಕೆ ಗಮನಕೊಡಿರಿ.</verse>
				<verse number="2">ಏಕೆಂದರೆ ನಾನು ನಿಮಗೆ ಸದುಪದೇಶವನ್ನು ಮಾಡುವೆನು, ನನ್ನ ಉಪದೇಶವನ್ನು ಬಿಟ್ಟುಬಿಡಬೇಡಿರಿ.</verse>
				<verse number="3">ನಾನೂ ಕೂಡ ನನ್ನ ತಂದೆಗೆ ನೆಚ್ಚಿನ ಮಗನೂ ನನ್ನ ತಾಯಿಗೆ ಮುದ್ದು ಮಗನೂ ಆಗಿದ್ದೆನು.</verse>
				<verse number="4">ನನ್ನ ತಂದೆ ನನಗೆ ಬೋಧಿಸಿ ಹೇಳಿದ್ದೇನೆಂದರೆ, “ನನ್ನ ಮಾತುಗಳನ್ನು ಮನಃಪೂರ್ವಕವಾಗಿ ಪಾಲಿಸು; ನನ್ನ ಆಜ್ಞೆಗಳನ್ನು ಕೈಗೊಳ್ಳು, ಆಗ ನೀನು ಬಾಳುವೆ.</verse>
				<verse number="5">ಜ್ಞಾನವನ್ನು ಪಡೆ, ತಿಳುವಳಿಕೆಯನ್ನು ಸಂಪಾದಿಸು; ನನ್ನ ಮಾತುಗಳನ್ನು ಮರೆಯದಿರು, ಅವುಗಳಿಂದ ದೂರವಾಗಬೇಡ.</verse>
				<verse number="6">ಜ್ಞಾನವನ್ನು ಬಿಟ್ಟುಬಿಡಬೇಡ, ಆಕೆ ನಿನ್ನನ್ನು ಕಾಪಾಡುವಳು; ಆಕೆಯನ್ನು ಪ್ರೀತಿಸು, ಆಕೆ ನಿನ್ನನ್ನು ಕಾಯುವಳು.</verse>
				<verse number="7">ಜ್ಞಾನವೇ ಮುಖ್ಯವಾದದ್ದು, ಆದ್ದರಿಂದ ಜ್ಞಾನವನ್ನು ಸಂಪಾದಿಸು; ನಿನ್ನಲ್ಲಿರುವ ಎಲ್ಲಾ ಸಂಪತ್ತನ್ನು ವ್ಯಯಮಾಡಿದರೂ ತಿಳುವಳಿಕೆಯನ್ನು ಪಡೆದುಕೋ.</verse>
				<verse number="8">ಜ್ಞಾನವನ್ನು ನೀನು ಅಮೂಲ್ಯವೆಂದು ಎಣಿಸು, ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿಕೊ, ಆಕೆಯು ನಿನ್ನನ್ನು ಘನಪಡಿಸುವಳು.</verse>
				<verse number="9">ಆಕೆಯನ್ನು ನಿನ್ನ ತಲೆಗೆ ಮಹಿಮೆಯ ಕಿರೀಟವಾಗಿರುವಳು; ಆಕೆಯನ್ನು ನಿನಗೆ ಘನತೆಯ ಕಿರೀಟವನ್ನು ಸಮರ್ಪಿಸುವಳು.”</verse>
				<verse number="10">ಮಗನೇ, ಆಲಿಸಿ ನನ್ನ ಮಾತುಗಳನ್ನು ಸ್ವೀಕರಿಸು, ಆಗ ನಿನ್ನ ಜೀವನದ ವರ್ಷಗಳು ಹೆಚ್ಚುವವು.</verse>
				<verse number="11">ಜ್ಞಾನ ಮಾರ್ಗದಲ್ಲಿ ನಾನು ನಿನಗೆ ಶಿಕ್ಷಣಕೊಡುವೆನು, ನೇರ ಮಾರ್ಗಗಳಲ್ಲಿ ನಿನ್ನನ್ನು ಮುನ್ನಡಿಸುವೆನು.</verse>
				<verse number="12">ನೀನು ನಡೆಯುವಾಗ ನಿನ್ನ ಹೆಜ್ಜೆಗೆ ತಡೆಯಾಗದು; ನೀನು ಓಡುವಾಗ ಮುಗ್ಗರಿಸಿ ಬೀಳುವುದಿಲ್ಲ.</verse>
				<verse number="13">ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ; ಸದುಪದೇಶವನ್ನು ಕಾಪಾಡಿಕೋ, ಏಕೆಂದರೆ ಅದು ನಿನ್ನ ಜೀವವಾಗಿದೆ.</verse>
				<verse number="14">ದುಷ್ಟರ ದಾರಿಯೊಳಗೆ ನೀನು ಪ್ರವೇಶಿಸದಿರು ಕೆಟ್ಟವರ ಮಾರ್ಗದಲ್ಲಿ ನೀನು ಹೋಗಬೇಡ.</verse>
				<verse number="15">ಆ ದಾರಿಯಿಂದ ತೊಲಗು, ಅದರ ಪಕ್ಕದಲ್ಲಿ ಹಾದು ಹೋಗಬೇಡ; ಅದರಿಂದ ತಪ್ಪಿಸಿಕೊಂಡು, ನಿನ್ನ ಮಾರ್ಗದಲ್ಲಿ ಮುಂದೆ ನಡೆ.</verse>
				<verse number="16">ಕೇಡು ಮಾಡದಿದ್ದರೆ ದುಷ್ಟರಿಗೆ ನಿದ್ರೆಬಾರದು; ಯಾರನ್ನಾದರೂ ಬೀಳಿಸದಿದ್ದರೆ, ಅವರಿಗೆ ನಿದ್ರೆ ಹತ್ತುವುದಿಲ್ಲ.</verse>
				<verse number="17">ಅವರಿಗೆ ದುಷ್ಟತನವೇ ಆಹಾರ, ಬಲಾತ್ಕಾರವೇ ಅವರಿಗೆ ದ್ರಾಕ್ಷಾರಸ.</verse>
				<verse number="18">ನೀತಿವಂತರ ಮಾರ್ಗವು ಮುಂಜಾನೆಯ ಸೂರ್ಯನ ಬೆಳಕಿನಂತೆ ಇದ್ದು, ದಿನದ ಪೂರ್ಣ ಬೆಳಕಿನವರೆಗೂ ಪ್ರಕಾಶಿಸಿ ಹೊಳೆಯುತ್ತಾ ಇರುವುದು.</verse>
				<verse number="19">ಆದರೆ, ದುಷ್ಟರ ಮಾರ್ಗವು ಕಗ್ಗತ್ತಲಿನಂತಿದೆ. ಅವರು ಯಾವುದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.</verse>
				<verse number="20">ಮಗನೇ, ನನ್ನ ಮಾತುಗಳಿಗೆ ಗಮನಕೊಡು; ನನ್ನ ನುಡಿಗಳಿಗೆ ಕಿವಿಗೊಡು.</verse>
				<verse number="21">ಆ ನುಡಿಗಳು ನಿನ್ನ ಕಣ್ಣುಗಳಿಂದ ತಪ್ಪಿ ಹೋಗದಿರಲಿ; ಅವುಗಳನ್ನು ನಿನ್ನ ಹೃದಯದೊಳಗೆ ಇಟ್ಟುಕೋ.</verse>
				<verse number="22">ಏಕೆಂದರೆ ಆ ನುಡಿಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ, ದೇಹಕ್ಕೆಲ್ಲಾ ಆರೋಗ್ಯವೂ ಆಗಿವೆ.</verse>
				<verse number="23">ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಏಕೆಂದರೆ ಅದರೊಳಗಿಂದ ನಿನ್ನ ಕೃತ್ಯಗಳು ಜೀವಧಾರೆಯಾಗಿ ಹೊರಡುತ್ತವೆ.</verse>
				<verse number="24">ವಕ್ರಮಾತುಗಳನ್ನು ನಿನ್ನ ಬಾಯಿಂದ ತೊಲಗಿಸಿ; ಕೆಟ್ಟ ಮಾತುಗಳು ನಿನ್ನ ತುಟಿಗಳಿಂದ ದೂರವಿರಲಿ.</verse>
				<verse number="25">ನಿನ್ನ ದೃಷ್ಟಿ ನೇರವಾಗಿಯೇ ನೋಡಲಿ; ನಿನ್ನ ನೋಟವು ನೇರವಾಗಿ ನಿನ್ನ ಮುಂದೆಯೇ ನಾಟಿರಲಿ.</verse>
				<verse number="26">ನೀನು ನಡೆಯುವ ದಾರಿಯ ಬಗ್ಗೆ ಗಮನವಿರಲಿ; ನೀನು ಕೈಗೊಳ್ಳುವ ಹಾದಿ ಸ್ಥಿರವಾಗಿರಲಿ.</verse>
				<verse number="27">ನಿನ್ನ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಕಾಲುಗಳು ದೂರವಿರಲಿ.</verse>
			</chapter>
			<chapter number="5">
				<verse number="1">ಮಗನೇ, ನನ್ನ ಜ್ಞಾನಕ್ಕೆ ಗಮನಕೊಡು; ನನ್ನ ಒಳನೋಟದ ಮಾತುಗಳಿಗೆ ಕಿವಿಗೊಡು.</verse>
				<verse number="2">ಆಗ ನಿನ್ನ ವಿವೇಚನೆಯನ್ನು ಉಳಿಸಿಕೊಳ್ಳುವೆ. ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡುವವು.</verse>
				<verse number="3">ಏಕೆಂದರೆ ಜಾರಿಣಿಯ ತುಟಿಗಳು ಜೇನುಗರೆಯುವುದು; ಅವಳ ಮಾತು ಎಣ್ಣೆಗಿಂತಲೂ ಮೃದು.</verse>
				<verse number="4">ಆದರೆ ಅಂತ್ಯದಲ್ಲಿ ಅವಳು ಮಾಚಿಪತ್ರೆಯಂತೆ ಕಹಿಯೂ, ಇಬ್ಬಾಯಿ ಖಡ್ಗದಂತೆ ಹರಿತವೂ ಆಗಿರುವಳು.</verse>
				<verse number="5">ಅವಳ ಪಾದಗಳು ಮರಣದ ಕಡೆಗೆ ಇಳಿದುಹೋಗುತ್ತವೆ; ಅವಳ ಹೆಜ್ಜೆಗಳು ನೇರವಾಗಿ ಪಾತಾಳಕ್ಕೆ ನಡೆಸುತ್ತವೆ.</verse>
				<verse number="6">ಜೀವಮಾರ್ಗದ ವಿಚಾರ ಅವಳಿಗಿಲ್ಲ; ಆದ್ದರಿಂದ ಅವಳ ಮಾರ್ಗಗಳು ಚಂಚಲವಾಗಿವೆ, ಅದರ ಅರಿವೂ ಅವಳಿಗಿಲ್ಲ.</verse>
				<verse number="7">ಮಕ್ಕಳಿರಾ, ನನ್ನ ಕಡೆಗೆ ಈಗ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳಿಂದ ದೂರವಾಗಬೇಡಿರಿ.</verse>
				<verse number="8">ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು; ಅವಳ ಮನೆಯ ಬಾಗಿಲ ಹತ್ತಿರಕ್ಕೆ ಹೋಗದೆ ಇರು.</verse>
				<verse number="9">ನೀನು ನಿನ್ನ ಗೌರವವನ್ನು ಬೇರೆಯವರಿಗೆ ಕಳೆಯಬೇಡ, ನಿನ್ನ ಘನತೆನ್ನು ಕ್ರೂರನಿಗೂ ಕೊಡಬೇಡ.</verse>
				<verse number="10">ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆ ಎಚ್ಚರಿಕೆ, ನಿನ್ನ ಪ್ರಯಾಸದ ಫಲವು ಪರರ ಮನೆ ಸೇರದಂತೆ ನೋಡಿಕೋ.</verse>
				<verse number="11">ನಿನ್ನ ಜೀವನದ ಅಂತ್ಯದಲ್ಲಿ ನಿನ್ನ ದೇಹವೂ ಕ್ಷೀಣಿಸಿದಾಗ, ನೀನು ನರಳಬೇಕಾದೀತು.</verse>
				<verse number="12">ಆಗ ನೀನು, “ಶಿಸ್ತನ್ನು ನಾನು ಎಷ್ಟೋ ಹಗೆ ಮಾಡಿದೆ; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.</verse>
				<verse number="13">ನನ್ನ ಬೋಧಕರ ಸ್ವರಕ್ಕೆ ನಾನು ವಿಧೇಯನಾಗದೆ ಹೋದೆ. ನನ್ನ ಉಪದೇಶಕರಿಗೆ ನಾನು ಕಿವಿಗೊಡದೆ ಹೋದೆ.</verse>
				<verse number="14">ನಾನು ದೇವರ ಸಭೆಯಲ್ಲಿ ಗಂಭೀರ ಸಮಸ್ಯೆಗೆ ಒಳಗಾದೆ,” ಎಂದು ಹೇಳುವೆ.</verse>
				<verse number="15">ನಿನ್ನ ಸ್ವಂತ ಕೊಳದ ನೀರನ್ನು ಕುಡಿ, ನಿನ್ನ ಸ್ವಂತ ಬಾವಿಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ.</verse>
				<verse number="16">ನಿನ್ನ ಬುಗ್ಗೆಗಳು ಬೀದಿಗಳಲ್ಲಿ ಹರಡುವುದು ಯುಕ್ತವೋ? ನೀರಿನ ಒರತೆಗಳು ಬೀದಿಚೌಕಗಳಲ್ಲಿ ಹರಿಯುವುದು ಸರಿಯೇ?</verse>
				<verse number="17">ಅವು ನಿನಗೆ ಸ್ವಂತವಾಗಿರಲಿ; ಪರರು ಭಾಗಿಗಳಾಗಿರಬಾರದು.</verse>
				<verse number="18">ನಿನ್ನ ಬುಗ್ಗೆಯು ಆಶೀರ್ವಾದ ಹೊಂದಲಿ; ನಿನ್ನ ಆನಂದವು ಯೌವನದ ಕಾಲದ ಹೆಂಡತಿಯೊಂದಿಗಿರಲಿ.</verse>
				<verse number="19">ಆಕೆಯು ಮನೋಹರವಾದ ಹರಿಣಿ, ಅಂದವಾದ ಜಿಂಕೆಯ ಹಾಗೆಯೂ; ಆಕೆಯ ಎದೆಯು ನಿನ್ನನ್ನು ಸದಾ ತೃಪ್ತಿಪಡಿಸಲಿ; ಆಕೆಯ ಪ್ರೀತಿಯಿಂದ ನೀನು ಸದಾ ಪರವಶನಾಗಿರು.</verse>
				<verse number="20">ಮಗನೇ, ಬೇರೆಯವನ ಹೆಂಡತಿಗೆ ವಶವಾಗುವುದೇಕೆ? ಅನ್ಯಳ ಎದೆಯನ್ನೇಕೆ ಅಪ್ಪಿಕೊಳ್ಳುವೆ?</verse>
				<verse number="21">ನಿನ್ನ ಮಾರ್ಗಗಳು ಯೆಹೋವ ದೇವರ ಮುಂದೆಯೇ ಇವೆ. ಅವರು ನಿನ್ನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾರೆ.</verse>
				<verse number="22">ದುಷ್ಟನನ್ನು ಅವನ ಸ್ವಂತ ದ್ರೋಹಗಳೇ ಹಿಡಿಯುತ್ತವೆ; ತನ್ನ ಪಾಪಗಳ ಪಾಶಗಳೇ ಅವನನ್ನು ಬಂಧಿಸುತ್ತದೆ.</verse>
				<verse number="23">ಶಿಸ್ತುಪಾಲನೆಯಿಲ್ಲದೆ ಅವನು ನಾಶವಾಗುವನು; ತನ್ನ ಅತಿಮೂರ್ಖತನದಿಂದಲೇ ತಪ್ಪಿಹೋಗುವನು.</verse>
			</chapter>
			<chapter number="6">
				<verse number="1">ಮಗನೇ, ನಿನ್ನ ನೆರೆಯವನಿಗೆ ನೀನು ಹೊಣೆಯಾಗಿದ್ದರೆ, ಪರನಿಗಾಗಿ ನಿನ್ನ ಕೈಯನ್ನು ಒಡ್ಡಿದ್ದರೆ,</verse>
				<verse number="2">ನೀನು ನುಡಿದ ನಿನ್ನ ಬಾಯಿ ಮಾತುಗಳಿಂದಲೇ ಸಿಕ್ಕಿಕೊಂಡಿರುವೆ. ನಿನ್ನ ಬಾಯಿ ಮಾತುಗಳೇ ನಿನ್ನನ್ನು ಸೆರೆಹಿಡಿದಿದೆ.</verse>
				<verse number="3">ಮಗನೇ, ನೀನು ನಿನ್ನ ನೆರೆಯವನ ಕೈಗೆ ಸಿಕ್ಕಿಕೊಂಡದರಿಂದ, ನಿನ್ನನ್ನು ನೀನು ತಪ್ಪಿಸಿಕೊಳ್ಳಲು ಇದನ್ನು ಮಾಡು: ಹೋಗಿ ನಿನ್ನನ್ನು ನೀನು ತಗ್ಗಿಸಿಕೋ, ನಿನ್ನ ನೆರೆಯವನಿಗೆ ವಿಶ್ರಾಂತಿಯನ್ನು ಕೊಡಬೇಡ.</verse>
				<verse number="4">ನಿನ್ನ ಕಣ್ಣುಗಳಿಗೆ ನಿದ್ರೆಯನ್ನೂ ನಿನ್ನ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡಬೇಡ.</verse>
				<verse number="5">ಬೇಟೆಗಾರನ ಕೈಯಿಂದ ಜಿಂಕೆಯೂ, ಬಲೆ ಬೀಸುವವನ ಕೈಯಿಂದ ಪಕ್ಷಿಯೂ ತಪ್ಪಿಸಿಕೊಳ್ಳುವಂತೆ ನೀನು ತಪ್ಪಿಸಿಕೋ.</verse>
				<verse number="6">ಸೋಮಾರಿಯೇ, ನೀನು ಇರುವೆಯ ಹತ್ತಿರ ಹೋಗಿ, ಅದರ ನಡವಳಿಕೆಯನ್ನು ನೋಡಿ ಜ್ಞಾನವಂತನಾಗು.</verse>
				<verse number="7">ನಾಯಕನಾಗಲೀ, ಮೇಲ್ವಿಚಾರಕನಾಗಲೀ, ಅಧಿಕಾರಿಯಾಗಲೀ ಇರುವೆಗೆ ಇಲ್ಲದೆ ಹೋದರೂ,</verse>
				<verse number="8">ಬೇಸಿಗೆಯಲ್ಲಿ ಅದು ತನ್ನ ಆಹಾರವನ್ನು ಸಂಗ್ರಹಿಸುತ್ತದೆ. ಸುಗ್ಗಿಯಲ್ಲಿ ತನ್ನ ಆಹಾರವನ್ನು ಕೂಡಿಸಿಕೊಳ್ಳುತ್ತದೆ.</verse>
				<verse number="9">ಸೋಮಾರಿಯೇ, ಎಷ್ಟು ಹೊತ್ತು ನೀನು ನಿದ್ರೆ ಮಾಡುವುದು? ನಿನ್ನ ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವೆ?</verse>
				<verse number="10">ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ಇನ್ನೂ ಸ್ವಲ್ಪ ವಿಶ್ರಾಂತಿಗಾಗಿ ಕೈ ಮುದುರಿಕೊಳ್ಳುವೆ ಎನ್ನುವೆಯಾ?</verse>
				<verse number="11">ಹೀಗೆ ನಿನಗೆ ಬಡತನವು ಕಳ್ಳನಂತೆಯೂ ಕೊರತೆಯು ಶಸ್ತ್ರಧಾರಿಯಂತೆಯೂ ನಿನ್ನ ಮೇಲೆ ಬರುವುವು.</verse>
				<verse number="12">ತೊಂದರೆಕೊಡುವವನೂ ಕೆಡುಕನೂ ಆಗಿರುವವನ ಬಾಯಿಂದ ಕುಟಿಲ ಮಾತೇ ಬರುವುದು.</verse>
				<verse number="13">ಅವನು ಕಣ್ಣು ಮಿಟುಕಿಸುತ್ತಾನೆ, ಕಾಲು ಕೆರೆಯುತ್ತಾನೆ, ಬೆರಳು ಸನ್ನೆಮಾಡುತ್ತಾನೆ,</verse>
				<verse number="14">ಅವನು ತನ್ನ ಹೃದಯದಲ್ಲಿ ಮೋಸಕರ ಯೋಜನೆಯನ್ನೇ ಮಾಡುತ್ತಾನೆ; ಯಾವಾಗಲೂ ಅವನು ಜಗಳವನ್ನು ಕಲ್ಪಿಸುತ್ತಾನೆ.</verse>
				<verse number="15">ಆದ್ದರಿಂದ ಅವನಿಗೆ ವಿಪತ್ತು ಬೇಗ ಬರುವುದು; ಯಾವ ಪರಿಹಾರವಿಲ್ಲದೆ ಅವನು ತಟ್ಟನೆ ನಾಶವಾಗುವನು.</verse>
				<verse number="16">ಈ ಆರು ವಿಷಯಗಳನ್ನು ಯೆಹೋವ ದೇವರು ಹಗೆ ಮಾಡುತ್ತಾರೆ; ಹೌದು, ಏಳು ದೇವರಿಗೆ ಅಸಹ್ಯವಾಗಿವೆ, ಅವು ಯಾವವೆಂದರೆ:</verse>
				<verse number="17">ಹೆಮ್ಮೆಯ ದೃಷ್ಟಿ, ಸುಳ್ಳಾಡುವ ನಾಲಿಗೆ, ನಿರಪರಾಧಿಯ ರಕ್ತವನ್ನು ಸುರಿಸುವ ಕೈಗಳು,</verse>
				<verse number="18">ದುರಾಲೋಚನೆಗಳನ್ನು ಕಲ್ಪಿಸುವ ಹೃದಯ, ಕೇಡಿಗೆ ನುಗ್ಗಲು ತ್ವರೆಪಡುವ ಕಾಲುಗಳು,</verse>
				<verse number="19">ಅಸತ್ಯವನ್ನಾಡುವ ಸುಳ್ಳುಸಾಕ್ಷಿ ಮತ್ತು ಸಹೋದರರಲ್ಲಿ ಜಗಳ ಹುಟ್ಟಿಸುವ ವ್ಯಕ್ತಿ.</verse>
				<verse number="20">ಮಗನೇ, ನಿನ್ನ ತಂದೆಯ ಆಜ್ಞೆಯನ್ನು ಕೈಗೊಳ್ಳು, ನಿನ್ನ ತಾಯಿಯ ಬೋಧನೆಯನ್ನು ತ್ಯಜಿಸಬೇಡ.</verse>
				<verse number="21">ಅವುಗಳನ್ನು ಯಾವಾಗಲೂ ನಿನ್ನ ಹೃದಯದಲ್ಲಿ ಬಂಧಿಸಿಕೋ. ಅವುಗಳನ್ನು ನಿನ್ನ ಕೊರಳಿಗೆ ಧರಿಸಿಕೋ.</verse>
				<verse number="22">ನೀನು ನಡೆಯುವಾಗ ಅವು ನಿನಗೆ ಮಾರ್ಗದರ್ಶಿಯಾಗಿರುತ್ತವೆ. ನೀನು ಮಲಗುವಾಗ ಅವು ನಿನ್ನನ್ನು ಕಾಯುತ್ತವೆ. ನೀನು ಎಚ್ಚರಗೊಂಡಾಗ ಅವು ನಿನ್ನೊಂದಿಗೆ ಮಾತಾಡುತ್ತವೆ.</verse>
				<verse number="23">ಆಜ್ಞೆಯೇ ದೀಪವಾಗಿದೆ, ಬೋಧನೆಯೇ ಬೆಳಕಾಗಿದೆ; ಶಿಕ್ಷಣದ ತಿದ್ದುವಿಕೆಗಳು ಜೀವ ಮಾರ್ಗವಾಗಿವೆ.</verse>
				<verse number="24">ಅವು ಕೆಟ್ಟ ಹೆಂಗಸಿನಿಂದಲೂ, ಪರಸ್ತ್ರೀಯ ವಂಚಕ ಮಾತಿನಿಂದಲೂ ನಿನ್ನನ್ನು ತಪ್ಪಿಸಿ ಕಾಪಾಡಬಲ್ಲವು.</verse>
				<verse number="25">ನಿನ್ನ ಹೃದಯ ಅವಳ ಸೌಂದರ್ಯವನ್ನು ಮೋಹಿಸದಿರಲಿ. ಅವಳ ಕಣ್ಣುರೆಪ್ಪೆಗಳಿಂದ ಅವಳು ನಿನ್ನನ್ನು ವಶಮಾಡಿಕೊಳ್ಳದೆ ಇರಲಿ.</verse>
				<verse number="26">ಏಕೆಂದರೆ ವೇಶ್ಯೆಯನ್ನು ಊಟದಿಂದ ಕೊಂಡುಕೊಳ್ಳಬಹುದು, ಆದರೆ ವ್ಯಭಿಚಾರಿಣಿ ಅಮೂಲ್ಯ ಜೀವವನ್ನೇ ಬೇಟೆಯಾಡುವಳು.</verse>
				<verse number="27">ಒಬ್ಬನು ತನ್ನ ಮಡಿಲಲ್ಲಿ ಬೆಂಕಿಯನ್ನು ಇಟ್ಟುಕೊಂಡರೆ, ಅವನ ವಸ್ತ್ರಗಳು ಸುಡುವುದಿಲ್ಲವೋ?</verse>
				<verse number="28">ಒಬ್ಬನು ಧಗಧಗಿಸುವ ಕೆಂಡದ ಮೇಲೆ ನಡೆದರೆ, ಅವನ ಪಾದಗಳು ಸುಡುವುದಿಲ್ಲವೋ?</verse>
				<verse number="29">ಪರನ ಹೆಂಡತಿಯನ್ನು ಕೂಡುವವನ ಗತಿಯು ಹೀಗೆಯೇ ಇರುವದು. ಅವಳನ್ನು ಮುಟ್ಟುವ ಯಾವನೂ ದಂಡನೆಯಿಂದ ತಪ್ಪಿಸಿಕೊಳ್ಳನು.</verse>
				<verse number="30">ಹಸಿದಾಗ ಕಳ್ಳನು ತನ್ನ ಹಸಿವೆಯನ್ನು ತೃಪ್ತಿಪಡಿಸಲು ಕಳವು ಮಾಡಿದರೆ, ಜನರು ಅವನನ್ನು ಹೀಯಾಳಿಸುವುದಿಲ್ಲ.</verse>
				<verse number="31">ಅವನು ಸಿಕ್ಕಿಕೊಂಡರೆ ಏಳರಷ್ಟು ಹಿಂದಕ್ಕೆ ಕೊಡಬೇಕಾಗುವುದು. ತನ್ನ ಮನೆಯ ಆಸ್ತಿಯನ್ನೆಲ್ಲಾ ಸಹ ಅವನು ಕೊಡಬೇಕಾಗುವುದು.</verse>
				<verse number="32">ವ್ಯಭಿಚಾರಿಯು ಬುದ್ಧಿಹೀನನಾಗಿದ್ದಾನೆ. ಹಾಗೆ ಮಾಡುವವನು ತನ್ನನ್ನೇ ನಾಶಮಾಡಿಕೊಳ್ಳುವನು.</verse>
				<verse number="33">ಅವನಿಗೆ ಗಾಯವೂ ಅವಮಾನವೂ ಆಗುತ್ತವೆ. ಅವನ ನಿಂದೆಯು ಎಂದಿಗೂ ಅಳಿಸಲಾಗದು.</verse>
				<verse number="34">ಏಕೆಂದರೆ ಮತ್ಸರವು ಪತಿಯ ಕ್ರೋಧವನ್ನು ಉದ್ರೇಕಿಸುವುದು. ಆದ್ದರಿಂದ ಮುಯ್ಯಿ ತೀರಿಸುವಾಗ ಅವನು ಕರುಣೆ ತೋರನು.</verse>
				<verse number="35">ಅವನು ಯಾವ ಪರಿಹಾರವನ್ನು ಒಪ್ಪುವುದಿಲ್ಲ; ಎಷ್ಟು ದೊಡ್ಡ ಲಂಚ ಕೊಟ್ಟರೂ ಅವನು ಅದನ್ನು ತಿರಸ್ಕರಿಸುವನು.</verse>
			</chapter>
			<chapter number="7">
				<verse number="1">ಮಗನೇ, ನನ್ನ ಮಾತುಗಳನ್ನು ಅನುಸರಿಸಿ, ನನ್ನ ಆಜ್ಞೆಗಳನ್ನು ನಿನ್ನಲ್ಲಿ ಇಟ್ಟುಕೋ.</verse>
				<verse number="2">ನನ್ನ ಆಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣುಗುಡ್ಡೆಯಂತೆ ನನ್ನ ಕಟ್ಟಳೆಗಳನ್ನು ಕಾಪಾಡು.</verse>
				<verse number="3">ಅವುಗಳನ್ನು ನಿನ್ನ ಬೆರಳುಗಳಿಗೆ ಉಂಗುರವಾಗಿಟ್ಟುಕೋ; ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ.</verse>
				<verse number="4">ಜ್ಞಾನಕ್ಕೆ, “ನೀನು ನನ್ನ ಸಹೋದರಿ,” ಎಂದೂ, ಒಳನೋಟಕ್ಕೆ, “ನನ್ನ ಬಂಧು” ಎಂದೂ ಹೇಳು.</verse>
				<verse number="5">ಅವು ವ್ಯಭಿಚಾರಿಣಿಯಿಂದಲೂ ಸವಿಮಾತನಾಡುವ ದಾರಿತಪ್ಪಿದ ಸ್ತ್ರೀಯಿಂದಲೂ ನಿನ್ನನ್ನು ಕಾಪಾಡುತ್ತವೆ.</verse>
				<verse number="6">ನಾನು ನನ್ನ ಮನೆಯ ಕಿಟಿಕಿಯ ಜಾಲರಿಯಿಂದ ಇಣಕಿ ನೋಡಿದಾಗ,</verse>
				<verse number="7">ಮುಗ್ಧರ ನಡುವೆ, ಯುವಕರ ಮಧ್ಯದಲ್ಲಿ, ತಿಳುವಳಿಕೆಯಿಲ್ಲದ ಯೌವನಸ್ಥನನ್ನು ಕಂಡೆನು.</verse>
				<verse number="8">ಅವನು ಅವಳ ಮೂಲೆ ಮನೆಯ ದಿಕ್ಕಿನಲ್ಲಿ ಬೀದಿಯಿಂದ ಹಾದುಹೋಗುತ್ತಿದ್ದನು.</verse>
				<verse number="9">ಸಂಜೆಯ ಮಬ್ಬಿನಲ್ಲಿ ರಾತ್ರಿಯ ಕತ್ತಲೆಯು ಕವಿಯುತ್ತಿತ್ತು.</verse>
				<verse number="10">ಇಗೋ, ವೇಶ್ಯೆಯ ವಸ್ತ್ರವನ್ನು ಧರಿಸಿಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರುಗೊಂಡಳು.</verse>
				<verse number="11">ಅವಳು ಕೂಗಾಟದವಳು, ಹಟಮಾರಿ; ಅವಳ ಪಾದಗಳು ಮನೆಯಲ್ಲಿ ನಿಲ್ಲುವುದೇ ಇಲ್ಲ.</verse>
				<verse number="12">ಒಮ್ಮೆ ಬೀದಿಯಲ್ಲಿ ಮತ್ತೊಮ್ಮೆ ಚೌಕಗಳಲ್ಲಿ ಹೀಗೆ ಅವಳು ಮೂಲೆ ಮೂಲೆಗೂ ಹೊಂಚು ಹಾಕುತ್ತಾಳೆ.</verse>
				<verse number="13">ಅವಳು ಆ ಯುವಕನನ್ನು ಹಿಡಿದುಕೊಂಡು ಮುದ್ದಿಟ್ಟು, ನಾಚಿಕೆಯಿಲ್ಲದೆ ಅವಳು ಹೀಗೆನ್ನುತ್ತಾಳೆ:</verse>
				<verse number="14">“ಈ ದಿವಸ ನನ್ನ ಹರಕೆಗಳನ್ನು ನಾನು ಸಲ್ಲಿಸಿದ್ದೇನೆ. ನಾನು ನನ್ನ ಸಮಾಧಾನದ ಯಜ್ಞವನ್ನು ಅರ್ಪಿಸಿದ್ದೇನೆ.</verse>
				<verse number="15">ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವುದಕ್ಕೆ ಬಂದೆನು; ಅತ್ಯಾಶೆಯಿಂದ ನಿನ್ನನ್ನು ಹುಡುಕಿ ಕಂಡುಕೊಂಡಿದ್ದೇನೆ.</verse>
				<verse number="16">ಈಜಿಪ್ಟಿನ ನಯವಾದ ನಾರು ಮಡಿಯಿಂದಲೂ ನನ್ನ ಹಾಸಿಗೆಯನ್ನು ಅಲಂಕರಿಸಿದ್ದೇನೆ.</verse>
				<verse number="17">ರಕ್ತಬೋಳ, ಅಗರು, ಲವಂಗ, ಚಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆಗೊಳಿಸಿದ್ದೇನೆ.</verse>
				<verse number="18">ಬಾ, ಬೆಳಗಿನವರೆಗೂ ತೃಪ್ತಿಯಾಗುವ ತನಕ ಪ್ರೀತಿಯ ವಶದಲ್ಲಿ ತುಂಬಿಕೊಂಡು ಕಾಮ ವಿಲಾಸಗಳಿಂದ ನಾವು ಸಂತೋಷಿಸೋಣ.</verse>
				<verse number="19">ಏಕೆಂದರೆ ಯಜಮಾನನು ಮನೆಯಲ್ಲಿ ಇಲ್ಲ; ಅವನು ದೀರ್ಘ ಪ್ರಯಾಣದಲ್ಲಿದ್ದಾನೆ.</verse>
				<verse number="20">ಅವನು ತನ್ನೊಂದಿಗೆ ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ; ಹುಣ್ಣಿಮೆಗೆ ಮುಂಚೆ ಅವನು ಮನೆಗೆ ಬರುವುದಿಲ್ಲ.”</verse>
				<verse number="21">ಮನವೊಲಿಸುವ ಮಾತುಗಳಿಂದ ಅವಳು ಅವನನ್ನು ದಾರಿ ತಪ್ಪಿಸಿ, ಅವಳು ತನ್ನ ಮೋಹಕ ಮಾತುಗಳಿಂದ ಅವನನ್ನು ಆಕರ್ಷಿಸುತ್ತಾಳೆ.</verse>
				<verse number="22">ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ, ಅಥವಾ ಜಿಂಕೆಯು ಬಲೆಗೆ ಸಿಕ್ಕಿಬೀಳುವಂತೆ,</verse>
				<verse number="23">ಅವನು ತನ್ನ ಪ್ರಾಣವು ಅಪಾಯದಲ್ಲಿರುವುದನ್ನು ತಿಳಿಯದೆ, ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವವರೆಗೆ, ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.</verse>
				<verse number="24">ಆದ್ದರಿಂದ ನನ್ನ ಮಕ್ಕಳೇ, ನನಗೆ ಕಿವಿಗೊಡಿರಿ, ನನ್ನ ಮಾತುಗಳನ್ನು ಆಲಿಸಿರಿ.</verse>
				<verse number="25">ಅವಳ ಮಾರ್ಗಗಳಿಗೆ ನಿಮ್ಮ ಹೃದಯವು ತಿರುಗದೆ ಇರಲಿ; ತಪ್ಪಿಯೂ ಅವಳ ದಾರಿಯಲ್ಲಿ ಹೋಗಬೇಡಿರಿ.</verse>
				<verse number="26">ಏಕೆಂದರೆ ಅನೇಕರು ಅವಳಿಗೆ ಬಲಿಯಾಗಿ ಬಿದ್ದಿದ್ದಾರೆ. ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ.</verse>
				<verse number="27">ಅವಳ ಮನೆಯು ಪಾತಾಳಕ್ಕೆ ಹೆದ್ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದು ಹೋಗುತ್ತದೆ.</verse>
			</chapter>
			<chapter number="8">
				<verse number="1">ಜ್ಞಾನವು ಕರೆಯುತ್ತದಲ್ಲವೋ? ತಿಳುವಳಿಕೆ ಎಂಬಾಕೆಯು ತನ್ನ ಸ್ವರವನ್ನು ಎತ್ತಿ ಕೂಗಿ ಕರೆಯುವುದಿಲ್ಲವೋ?</verse>
				<verse number="2">ಉನ್ನತ ಸ್ಥಳಗಳ ತುದಿಯಲ್ಲಿಯೂ, ಹಾದಿಗಳ ಸಂಧಿಗಳಲ್ಲಿಯೂ ನಿಂತುಕೊಳ್ಳುತ್ತಾಳೆ.</verse>
				<verse number="3">ಪಟ್ಟಣದ ಪ್ರವೇಶ ದ್ವಾರಗಳಲ್ಲಿಯೂ ಒಳಗೆ ಬರುವಾಗ ಅವಳು ಸ್ವರವೆತ್ತಿ ಹೇಳುವುದೇನೆಂದರೆ,</verse>
				<verse number="4">“ಮನುಷ್ಯರೇ, ನಾನು ಕರೆಯುತ್ತಿರುವುದು ನಿಮ್ಮನ್ನೇ, ಮಾನವರಿಗಾಗಿಯೇ ನಾನು ಧ್ವನಿಗೈಯುತ್ತೇನೆ.</verse>
				<verse number="5">ಮುಗ್ಧರೇ, ಜ್ಞಾನವನ್ನು ಗ್ರಹಿಸಿರಿ. ಬುದ್ಧಿಹೀನರೇ, ನೀವು ತಿಳುವಳಿಕೆಯ ಹೃದಯದವರಾಗಿರಿ.</verse>
				<verse number="6">ಕೇಳಿರಿ, ಉತ್ಕೃಷ್ಟ ಸಂಗತಿಗಳನ್ನು ನಾನು ಮಾತಾಡುವೆನು; ನ್ಯಾಯವಾದ ಸಂಗತಿಗಳಿಗಾಗಿ ನನ್ನ ತುಟಿಗಳನ್ನು ತೆರೆಯುವೆನು.</verse>
				<verse number="7">ನನ್ನ ಬಾಯಿಯು ಸತ್ಯವನ್ನು ಮಾತಾಡುವುದು; ನನ್ನ ತುಟಿಗಳಿಗೆ ಕೆಟ್ಟತನವು ಅಸಹ್ಯವಾಗಿದೆ.</verse>
				<verse number="8">ನನ್ನ ಬಾಯಿಯ ಮಾತುಗಳೆಲ್ಲಾ ನೀತಿಯುಕ್ತವಾಗಿವೆ; ಮೂರ್ಖತನವಾಗಲಿ, ವಕ್ರತೆಯಾಗಲಿ ಅವುಗಳಲ್ಲಿ ಇಲ್ಲ.</verse>
				<verse number="9">ವಿವೇಚಿಸುವವನಿಗೆ ನನ್ನ ಎಲ್ಲ ಮಾತುಗಳು ನೇರವಾಗಿರುವುದು. ತಿಳುವಳಿಕೆ ಉಳ್ಳವನಿಗೆ ಅವು ಪ್ರಾಮಾಣಿಕವಾಗಿಯೂ ಇರುವುದು.</verse>
				<verse number="10">ಬೆಳ್ಳಿಗಿಂತ ನನ್ನ ಬೋಧನೆಯನ್ನು ಆರಿಸಿಕೋ ಉತ್ತಮ ಬಂಗಾರಕ್ಕಿಂತ ಮಿಗಿಲಾದ ತಿಳುವಳಿಕೆಯನ್ನು ಪಡೆದುಕೋ.</verse>
				<verse number="11">ಏಕೆಂದರೆ ಮಾಣಿಕ್ಯಗಳಿಗಿಂತ ಜ್ಞಾನವು ಅಮೂಲ್ಯವಾದದ್ದು. ಅಪೇಕ್ಷಿಸತಕ್ಕ ಯಾವ ವಸ್ತುಗಳನ್ನು ಅದಕ್ಕೆ ಹೋಲಿಸಲಾಗದು.</verse>
				<verse number="12">“ಜ್ಞಾನವೆಂಬ ನಾನು ವಿವೇಕದೊಂದಿಗೆ ವಾಸವಾಗಿದ್ದೇನೆ. ತಿಳುವಳಿಕೆಯನ್ನೂ ವಿವೇಚನೆಯನ್ನೂ ನಾನು ಹೊಂದಿದ್ದೇನೆ.</verse>
				<verse number="13">ಕೆಟ್ಟದ್ದನ್ನು ಹಗೆ ಮಾಡುವುದೇ ಯೆಹೋವ ದೇವರ ಭಯವಾಗಿದೆ; ಗರ್ವ, ಅಹಂಕಾರ, ಕೆಟ್ಟನಡವಳಿಕೆ, ವಕ್ರ ಭಾಷಣಗಳನ್ನು ನಾನು ಹಗೆಮಾಡುತ್ತೇನೆ.</verse>
				<verse number="14">ಸಮಾಲೋಚನೆಯೂ ಒಳ್ಳೆಯ ನ್ಯಾಯವೂ ನನ್ನಲ್ಲಿದೆ. ನನ್ನಲ್ಲಿ ಒಳನೋಟವೂ ಶಕ್ತಿಯೂ ಇವೆ.</verse>
				<verse number="15">ನನ್ನ ಮೂಲಕ ರಾಜರು ಆಳುವರು; ಪ್ರಧಾನರು ನ್ಯಾಯವಾದ ತೀರ್ಪು ಕೊಡುವರು.</verse>
				<verse number="16">ನನ್ನಿಂದ ಅಧಿಪತಿಗಳು ಆಳುತ್ತಾರೆ, ಕೀರ್ತಿವಂತರೆಲ್ಲರೂ ಭೂಮಿಯ ಮೇಲೆ ಆಳುವರು.</verse>
				<verse number="17">ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ; ಹಂಬಲಿಸಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.</verse>
				<verse number="18">ಐಶ್ವರ್ಯವೂ ಘನತೆಯೂ, ಶಾಶ್ವತ ಸಂಪತ್ತು ಹಾಗೂ ಸಮೃದ್ಧಿಯು ನನ್ನೊಂದಿಗಿವೆ.</verse>
				<verse number="19">ನನ್ನ ಫಲವು ಬಂಗಾರಕ್ಕಿಂತಲೂ, ನನ್ನ ಆದಾಯವು ಉತ್ತಮವಾದ ಬೆಳ್ಳಿಗಿಂತಲೂ ಶ್ರೇಷ್ಠವಾಗಿವೆ.</verse>
				<verse number="20">ನೀತಿಯ ಮಾರ್ಗದಲ್ಲಿಯೂ ನ್ಯಾಯದ ದಾರಿ ನಡುವೆಯೂ ನಾನು ನಡೆಯುತ್ತೇನೆ.</verse>
				<verse number="21">ನನ್ನನ್ನು ಪ್ರೀತಿಸುವವರು ಸಂಪತ್ತನ್ನು ಬಾಧ್ಯವಾಗಿ ಹೊಂದುವರು. ನಾನು ಅವರ ಬೊಕ್ಕಸಗಳನ್ನು ತುಂಬಿಸುವೆನು.</verse>
				<verse number="22">“ಯೆಹೋವ ದೇವರು ತಮ್ಮ ಸೃಷ್ಟಿಕ್ರಮದಲ್ಲಿ ನನ್ನನ್ನು ಮೊದಲು ನಿರ್ಮಿಸಿದರು, ದೇವರ ಪುರಾತನ ಕಾರ್ಯಗಳಲ್ಲಿ ನಾನೇ ಮೊದಲು;</verse>
				<verse number="23">ಪ್ರಾರಂಭದಲ್ಲಿ ಜಗದುತ್ಪತ್ತಿಗೆ ಮುಂಚೆಯೇ ಅನಾದಿಕಾಲದಲ್ಲಿ ದೇವರು ನನ್ನನ್ನು ಸೃಷ್ಟಿಸಿದರು.</verse>
				<verse number="24">ಆಗಾಧಗಳು ಇಲ್ಲದೆ ಇರುವಾಗ ನಾನು ಹುಟ್ಟಿ ಬಂದೆನು, ನೀರಿನ ಬುಗ್ಗೆಗಳು ಇಲ್ಲದೆ ಇರುವಾಗಲೇ ನಾನಿದ್ದೆನು.</verse>
				<verse number="25">ಪರ್ವತಗಳು ಸ್ಥಾಪಿತವಾಗುವುದಕ್ಕಿಂತ ಮುಂಚೆಯೂ ಬೆಟ್ಟಗುಡ್ಡಗಳಿಗಿಂತ ಮೊದಲು ನಾನು ಜನಿಸಿದೆನು.</verse>
				<verse number="26">ಭೂಮಿಯನ್ನೂ ಹೊಲಗಳನ್ನೂ ಲೋಕದ ಅಣುಗಳನ್ನೂ ಅವರು ನಿರ್ಮಿಸದೆ ಇರುವಾಗಲೇ ನಾನು ಜನಿಸಿದೆನು.</verse>
				<verse number="27">ಅವರು ಆಕಾಶಗಳನ್ನು ಸಿದ್ಧಪಡಿಸಿದಾಗ ಸಾಗರದ ಮೇಲೆ ಚಕ್ರವನ್ನು ಹಾಕಿದಾಗ,</verse>
				<verse number="28">ಮೇಲೆ ಮೇಘಗಳನ್ನು ಅವರು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಅವರು ಬಲಪಡಿಸಿದಾಗ,</verse>
				<verse number="29">ಪ್ರವಾಹಗಳು ತನ್ನ ಆಜ್ಞೆಯನ್ನು ಮೀರದಂತೆ ಸಮುದ್ರಕ್ಕೆ ಅವರು ಮೇರೆಯನ್ನು ಮಾಡಿ ಭೂಮಿಯ ಅಸ್ತಿವಾರಗಳನ್ನು ನೇಮಿಸಿದಾಗ, ನಾನು ಅಲ್ಲಿ ಇದ್ದೆನು.</verse>
				<verse number="30">ಆಗ ನಾನು ಅವರೊಂದಿಗೆ ಕುಶಲ ಶಿಲ್ಪಿಯಂತೆ ಅವರ ಹತ್ತಿರ ಇದ್ದೆನು. ಅವರ ಸನ್ನಿಧಿಯಲ್ಲಿ ಯಾವಾಗಲೂ ಆನಂದಿಸುತ್ತಾ ಅನುದಿನವೂ ಸಂತೋಷಿಸುತ್ತಿದ್ದೆನು.</verse>
				<verse number="31">ಅವರ ಭೂಮಿಯ ವಾಸಸ್ಥಳದ ಭಾಗದಲ್ಲಿ ಸಂತೋಷಿಸುತ್ತಿದ್ದೆನು; ಮಾನವರೊಂದಿಗೆ ಆನಂದಿಸುತ್ತಿದ್ದೆನು.</verse>
				<verse number="32">“ಆದ್ದರಿಂದ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.</verse>
				<verse number="33">ನನ್ನ ಬೋಧನೆಯನ್ನು ಕೇಳಿ ಬುದ್ಧಿವಂತರಾಗಿರಿ; ಅದನ್ನು ನೀವು ತಿರಸ್ಕರಿಸಬೇಡಿರಿ.</verse>
				<verse number="34">ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ, ನನ್ನ ಬಾಗಿಲುಗಳ ನಿಲುವುಗಳಲ್ಲಿ ನಿರೀಕ್ಷಿಸುತ್ತಾ, ನನ್ನ ಮಾತುಗಳನ್ನು ಕೇಳುವವರು ಧನ್ಯರು.</verse>
				<verse number="35">ಏಕೆಂದರೆ ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಯೆಹೋವ ದೇವರ ಕೃಪೆಯನ್ನು ಹೊಂದುವನು.</verse>
				<verse number="36">ಆದರೆ ನನ್ನನ್ನು ಬಿಟ್ಟು ದೂರಹೋಗುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ, ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”</verse>
			</chapter>
			<chapter number="9">
				<verse number="1">ಜ್ಞಾನ ಎಂಬಾಕೆಯು ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ; ಆಕೆಯು ತನ್ನ ಏಳು ಕಂಬಗಳನ್ನು ಕೆತ್ತಿಸಿದ್ದಾಳೆ.</verse>
				<verse number="2">ಆಕೆಯು ಮಾಂಸದ ಆಹಾರನ್ನು ತಯಾರಿಸಿ, ತನ್ನ ದ್ರಾಕ್ಷಾರಸವನ್ನು ಬೆರೆಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು.</verse>
				<verse number="3">ಆಕೆಯು ತನ್ನ ದಾಸಿಯರನ್ನು ಕಳುಹಿಸುತ್ತಾಳೆ; ಆಕೆಯು ಪಟ್ಟಣದ ಅತಿ ಉನ್ನತ ಸ್ಥಳದಿಂದ ಕೂಗುತ್ತಾಳೆ,</verse>
				<verse number="4">“ಯಾರು ಮುಗ್ಧರೋ ಅವರು ನನ್ನ ಮನೆಗೆ ಬರಲಿ,” ಬುದ್ಧಿ ಇಲ್ಲದೆ ಇರುವವನಿಗೆ ಆಕೆಯು ಹೇಳುತ್ತಾಳೆ,</verse>
				<verse number="5">“ಬಾ, ನನ್ನ ಆಹಾರವನ್ನು ತಿಂದು, ನಾನು ಬೆರೆಸಿದ ದ್ರಾಕ್ಷಾರಸವನ್ನು ಕುಡಿ,” ಎಂದೂ</verse>
				<verse number="6">“ನಿಮ್ಮ ಮೂಢತ್ವವನ್ನು ಬಿಟ್ಟು ಬಾಳಿರಿ ಮತ್ತು ವಿವೇಕದ ಮಾರ್ಗದಲ್ಲಿ ಹೋಗು,” ಎಂದೂ ಕೂಗುತ್ತಾಳೆ.</verse>
				<verse number="7">ಪರಿಹಾಸ್ಯ ಮಾಡುವವನನ್ನು ಗದರಿಸುವವನು ತನ್ನನ್ನು ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು; ದುಷ್ಟನನ್ನು ಗದರಿಸುವವನು ತನಗೆ ತಾನೇ ಕಳಂಕವನ್ನು ತಂದುಕೊಳ್ಳುವನು.</verse>
				<verse number="8">ಪರಿಹಾಸ್ಯ ಮಾಡುವವನನ್ನು ಗದರಿಸಬೇಡ ಅವನು ನಿನ್ನನ್ನು ಹಗೆ ಮಾಡುವನು; ಜ್ಞಾನಿಯನ್ನು ಗದರಿಸಿದರೆ ಅವನು ನಿನ್ನನ್ನು ಪ್ರೀತಿ ಮಾಡುವನು.</verse>
				<verse number="9">ಜ್ಞಾನಿಗೆ ಶಿಕ್ಷಣ ನೀಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು; ನೀತಿವಂತನಿಗೆ ಬೋಧಿಸಿದರೆ ಅವನು ಜ್ಞಾನವನ್ನು ಹೆಚ್ಚಿಸಿಕೊಳ್ಳುವನು.</verse>
				<verse number="10">ಯೆಹೋವ ದೇವರ ಭಯವೇ ಜ್ಞಾನಕ್ಕೆ ಮೂಲವು. ಪರಿಶುದ್ಧರ ಪರಿಜ್ಞಾನವೇ ತಿಳುವಳಿಕೆಯಾಗಿದೆ.</verse>
				<verse number="11">ಏಕೆಂದರೆ ಜ್ಞಾನದ ಮೂಲಕ ನಿನ್ನ ಜೀವನದ ದಿನಗಳು ಹೆಚ್ಚುವುವು; ನಿನ್ನ ಜೀವನದ ವರ್ಷಗಳು ವೃದ್ಧಿಯಾಗುವುವು.</verse>
				<verse number="12">ನೀನು ಜ್ಞಾನಿಯಾದರೆ, ನಿನ್ನ ಜ್ಞಾನವು ನಿನಗೆ ಪ್ರತಿಫಲ ಕೊಡುವುದು; ನೀನು ನಿಂದಿಸುವವನಾದರೆ, ನೀನೇ ಅದರ ಫಲವನ್ನು ಅನುಭವಿಸುವಿ.</verse>
				<verse number="13">ಬುದ್ಧಿಹೀನಳಾದ ಸ್ತ್ರೀಯು ಕೂಗಾಟದವಳು; ಅವಳು ಅರಿವಿಲ್ಲದವಳು, ಏನೂ ತಿಳಿಯದವಳು.</verse>
				<verse number="14">ಅವಳು ತನ್ನ ಮನೆಯ ಬಾಗಿಲಿನಲ್ಲಿ ಕುಳಿತು, ಪಟ್ಟಣದ ಎತ್ತರವಾದ ಸ್ಥಳಗಳ ಪೀಠದ ಮೇಲೆ ನಿಂತು,</verse>
				<verse number="15">ತಮ್ಮ ಮಾರ್ಗವನ್ನು ಹಿಡಿದು ಹೋಗುವ ಪ್ರಯಾಣಿಕರನ್ನು ಕರೆಯುತ್ತಾಳೆ,</verse>
				<verse number="16">“ಯಾರು ಮುಗ್ಧರೋ ಅವರು ನನ್ನ ಮನೆಗೆ ಬರಲಿ,” ಬುದ್ಧಿ ಇಲ್ಲದೆ ಇರುವವನಿಗೆ ಆಕೆಯು ಹೇಳುತ್ತಾಳೆ,</verse>
				<verse number="17">“ಕದ್ದ ನೀರು ಸಿಹಿಯಾಗಿದೆ; ರಹಸ್ಯದಲ್ಲಿ ತಿನ್ನುವ ಆಹಾರವು ರುಚಿಯಾಗಿದೆ,” ಎಂದು ಹೇಳುತ್ತಾಳೆ.</verse>
				<verse number="18">ಆದರೆ ಆ ಮನೆ ಸತ್ತವರ ಸ್ಥಾನವಾಗಿದೆ. ಅವಳ ಅತಿಥಿಗಳು ಪಾತಾಳದ ಅಗಾಧದಲ್ಲಿ ಬಿದ್ದಿದ್ದಾರೆಂದು ಅವನಿಗೆ ತಿಳಿಯದು.</verse>
			</chapter>
			<chapter number="10">
				<verse number="1">ಸೊಲೊಮೋನನ ಜ್ಞಾನೋಕ್ತಿಗಳು: ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನು ಉಂಟುಮಾಡುತ್ತಾನೆ. ಅಜ್ಞಾನಿಯಾದ ಮಗನಾದರೋ ತನ್ನ ತಾಯಿಗೆ ಶೋಕವನ್ನುಂಟು ಮಾಡುತ್ತಾನೆ.</verse>
				<verse number="2">ಅನ್ಯಾಯದ ಸಂಪತ್ತುಗಳು ಶಾಶ್ವತವಲ್ಲ, ಆದರೆ ನೀತಿಯು ಮರಣದಿಂದ ಬಿಡಿಸುತ್ತದೆ.</verse>
				<verse number="3">ನೀತಿವಂತನನ್ನು ಹಸಿವೆಯಿಂದ ಬಳಲುವಂತೆ ಯೆಹೋವ ದೇವರು ಬಿಡುವುದಿಲ್ಲ; ಆದರೆ ದುಷ್ಟರ ಆಶೆಯನ್ನು ಅವರು ಭಂಗಪಡಿಸುತ್ತಾರೆ.</verse>
				<verse number="4">ಆಲಸ್ಯದ ಕೈ ದರಿದ್ರನನ್ನಾಗಿ ಮಾಡುವದು; ಆದರೆ ಚುರುಕಾದ ಕೈ ಐಶ್ವರ್ಯವನ್ನುಂಟು ಮಾಡುತ್ತದೆ.</verse>
				<verse number="5">ಬೇಸಿಗೆಯಲ್ಲಿ ಫಸಲನ್ನು ಕೂಡಿಸುವವರು ಬುದ್ಧಿವಂತ ಮಕ್ಕಳು, ಸುಗ್ಗಿಯಲ್ಲಿ ನಿದ್ರೆ ಮಾಡುವವರು ನಾಚಿಕೆಗೆಟ್ಟ ಮಕ್ಕಳು.</verse>
				<verse number="6">ನೀತಿವಂತರ ತಲೆಯ ಮೇಲೆ ಆಶೀರ್ವಾದವಿದೆ; ಆದರೆ ದುಷ್ಟರ ಬಾಯಲ್ಲಿ ಕ್ರೌರ್ಯ ಅಡಗಿದೆ.</verse>
				<verse number="7">ನೀತಿವಂತರ ಸ್ಮರಣೆಯು ಆಶೀರ್ವಾದಕ್ಕೆ ಆಸ್ಪದ; ಆದರೆ ದುಷ್ಟನ ಹೆಸರು ಕೊಳೆಯುವುದು.</verse>
				<verse number="8">ಜ್ಞಾನ ಹೃದಯದವರು ಆಜ್ಞೆಗಳನ್ನು ಸ್ವೀಕರಿಸುವರು; ಆದರೆ ಹರಟೆಯ ಮೂರ್ಖನು ಬೀಳುವನು.</verse>
				<verse number="9">ಯಥಾರ್ಥ ನಡತೆಯವರು ಸುರಕ್ಷಿತವಾಗಿ ಜೀವಿಸುತ್ತಾರೆ; ಆದರೆ ವಕ್ರಮಾರ್ಗಗಳಲ್ಲಿ ನಡೆಯುವವನು ಬಯಲಿಗೆ ಬರುವನು.</verse>
				<verse number="10">ದುರುದ್ದೇಶದಿಂದ ಕಣ್ಣು ಮಿಟಕಿಸುವವನು ದುಃಖವನ್ನು ಉಂಟುಮಾಡುತ್ತಾನೆ, ಆದರೆ ಹರಟೆಯ ಮೂರ್ಖನು ಬೀಳುವನು.</verse>
				<verse number="11">ನೀತಿವಂತನ ಬಾಯಿಯು ಜೀವದ ಬುಗ್ಗೆ; ಆದರೆ ದುಷ್ಟನ ಬಾಯಿ ಹಿಂಸೆಯನ್ನು ಮರೆಮಾಡುತ್ತದೆ.</verse>
				<verse number="12">ದ್ವೇಷವು ಜಗಳಗಳನ್ನು ಎಬ್ಬಿಸುತ್ತದೆ; ಆದರೆ ಪ್ರೀತಿಯು ಎಲ್ಲಾ ಪಾಪಗಳನ್ನು ಮುಚ್ಚುತ್ತದೆ.</verse>
				<verse number="13">ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕುತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ.</verse>
				<verse number="14">ಜ್ಞಾನಿಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ವಿನಾಶವನ್ನು ಆಹ್ವಾನಿಸುತ್ತದೆ.</verse>
				<verse number="15">ಐಶ್ವರ್ಯವಂತರಿಗೆ ಸಂಪತ್ತೇ ಅವರ ಬಲವಾದ ಕೋಟೆ; ಆದರೆ, ಬಡತನವೇ ಬಡವರ ನಾಶನಕ್ಕೆ ಕಾರಣ.</verse>
				<verse number="16">ನೀತಿವಂತರ ದುಡಿತವು ಜೀವವಾಗುವುದು; ಆದರೆ, ದುಷ್ಟರ ಆದಾಯವು ಪಾಪ ಹಾಗು ಮರಣ.</verse>
				<verse number="17">ಶಿಸ್ತನ್ನು ಕೈಗೊಳ್ಳುವವನು ಜೀವದ ಮಾರ್ಗವನ್ನು ತೋರಿಸುವನು; ಆದರೆ ತಿದ್ದುಪಾಟನ್ನು ತಿರಸ್ಕರಿಸುವವನು ಇತರರ ದಾರಿತಪ್ಪಿಸುವನು.</verse>
				<verse number="18">ದ್ವೇಷವನ್ನು ಮರೆಮಾಚುವವನು ಸುಳ್ಳುಗಾರ ಮತ್ತು ಚಾಡಿ ಹೇಳುವವನು ಮೂರ್ಖನು.</verse>
				<verse number="19">ಅತಿಯಾದ ಮಾತುಗಳಿಂದ ಪಾಪವು ಕೊನೆಗೊಳ್ಳುವುದಿಲ್ಲ. ಆದರೆ ಜ್ಞಾನವಂತನು ತನ್ನ ನಾಲಿಗೆಯನ್ನು ತಡೆಯುವನು.</verse>
				<verse number="20">ನೀತಿವಂತರ ನಾಲಿಗೆಯು ಚೊಕ್ಕಬೆಳ್ಳಿಯಂತಿದೆ; ದುಷ್ಟರ ಹೃದಯವು ಬೆಲೆಯಿಲ್ಲದ್ದು.</verse>
				<verse number="21">ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ, ಜ್ಞಾನದ ಕೊರತೆಯಿಂದ ಬುದ್ಧಿಹೀನರು ಸಾಯುತ್ತಾರೆ.</verse>
				<verse number="22">ಯೆಹೋವ ದೇವರ ಆಶೀರ್ವಾದವು ಸಂಪತ್ತನ್ನು ಉಂಟುಮಾಡುವುದು; ಅವರು ಅದರೊಂದಿಗೆ ಯಾವ ದುಃಖವನ್ನೂ ಸೇರಿಸುವುದಿಲ್ಲ.</verse>
				<verse number="23">ಮೂರ್ಖನಿಗೆ ಕೇಡು ಮಾಡುವುದರಲ್ಲಿ ಆನಂದ; ಆದರೆ ತಿಳುವಳಿಕೆಯ ವ್ಯಕ್ತಿಯು ಜ್ಞಾನದಲ್ಲಿ ಸಂತೋಷಪಡುತ್ತಾನೆ.</verse>
				<verse number="24">ದುಷ್ಟನ ಭೀತಿಯೇ ಅವನನ್ನು ಹಿಂದಿಕ್ಕುವುದು; ಆದರೆ ನೀತಿವಂತರ ಇಷ್ಟವು ಸಫಲವಾಗುವುದು.</verse>
				<verse number="25">ಬಿರುಗಾಳಿಯು ಬೀಸಿದರೆ, ದುಷ್ಟರು ಇಲ್ಲವಾಗುವರು; ಆದರೆ ನೀತಿವಂತರು ಶಾಶ್ವತವಾಗಿ ನಿಲ್ಲುವರು.</verse>
				<verse number="26">ಹಲ್ಲುಗಳಿಗೆ ಹುಳಿಯೂ, ಕಣ್ಣುಗಳಿಗೆ ಹೊಗೆಯೂ ಹೇಗೋ, ಯಜಮಾನನಿಗೆ ಸೋಮಾರಿಯು ಹಾಗೆಯೇ ಇರುವನು.</verse>
				<verse number="27">ಯೆಹೋವ ದೇವರ ಭಯವು ಜೀವನದ ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರ್ಷಗಳು ಕಡಿಮೆ ಆಗುವವು.</verse>
				<verse number="28">ನೀತಿವಂತರ ನಿರೀಕ್ಷೆಯು ಆನಂದಕರವಾಗಿರುವುದು; ಆದರೆ ದುಷ್ಟರ ನಿರೀಕ್ಷೆಯು ನಾಶವಾಗುವುದು.</verse>
				<verse number="29">ಯೆಹೋವ ದೇವರ ಮಾರ್ಗವು ನಿರ್ದೋಷಿಗಳಿಗೆ ಆಶ್ರಯವಾಗಿದೆ; ಆದರೆ ಕೇಡು ಮಾಡುವವರಿಗೆ ಅದು ವಿನಾಶಕರವಾಗಿದೆ.</verse>
				<verse number="30">ನೀತಿವಂತರು ಎಂದಿಗೂ ಕದಲುವುದೇ ಇಲ್ಲ; ಆದರೆ ದುಷ್ಟರು ಭೂಮಿಯಲ್ಲಿ ನಿಲ್ಲುವುದಿಲ್ಲ.</verse>
				<verse number="31">ನೀತಿವಂತರ ಬಾಯಲ್ಲಿ ಜ್ಞಾನವು ಫಲಿಸುತ್ತದೆ; ಆದರೆ ಮೂರ್ಖನ ನಾಲಿಗೆಯು ಕತ್ತರಿಸಲಾಗುವುದು.</verse>
				<verse number="32">ಯೋಗ್ಯವಾದದ್ದು ಯಾವುದೆಂದು ನೀತಿವಂತರ ತುಟಿಗಳಿಗೆ ತಿಳಿಯುವುದು, ಆದರೆ, ದುಷ್ಟರ ಬಾಯಿ ಮೂರ್ಖತನವನ್ನೇ ಹೊರಗೆಡವುದು.</verse>
			</chapter>
			<chapter number="11">
				<verse number="1">ಮೋಸದ ತಕ್ಕಡಿ ಯೆಹೋವ ದೇವರಿಗೆ ಅಸಹ್ಯವಾಗಿದೆ; ಆದರೆ ನ್ಯಾಯದ ತೂಕ ಅವರಿಗೆ ಮೆಚ್ಚುಗೆ.</verse>
				<verse number="2">ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ಆದರೆ ದೀನತೆಯೊಂದಿಗೆ ಜ್ಞಾನ ಬರುವುದು.</verse>
				<verse number="3">ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡೆಸುವುದು; ಅಪನಂಬಿಗಸ್ತರ ಕಪಟತನವೇ ಅವರನ್ನು ನಾಶಪಡಿಸುವುದು.</verse>
				<verse number="4">ಉಗ್ರತೆಯ ದಿನದಲ್ಲಿ ಸಂಪತ್ತು ಲಾಭಕರವಾಗುವುದಿಲ್ಲ; ಆದರೆ ನೀತಿಯ ನಡತೆ ಮರಣದಿಂದ ವಿಮೋಚಿಸುವುದು.</verse>
				<verse number="5">ನಿಷ್ಕಳಂಕರ ನೀತಿಯು ಅವರ ಮಾರ್ಗವನ್ನು ಸರಾಗ ಮಾಡುವುದು; ಆದರೆ ದುಷ್ಟರು ತಮ್ಮ ದುಷ್ಟತ್ವದಿಂದಲೇ ಬೀಳುವರು.</verse>
				<verse number="6">ಯಥಾರ್ಥವಂತರ ನೀತಿಯು ಅವರನ್ನು ಬಿಡಿಸುವುದು; ಆದರೆ ಅಪನಂಬಿಗಸ್ತರು ದುಷ್ಟ ಆಸೆಗಳಿಂದ ಸಿಕ್ಕಿಹಾಕಿಕೊಳ್ಳುತ್ತಾರೆ.</verse>
				<verse number="7">ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳು ಹಾಳಾಗುವುವು; ತನ್ನ ಬಲದಿಂದ ನಿರೀಕ್ಷಿಸಿದ್ದೆಲ್ಲವೂ ಇಲ್ಲದಂತಾಗುವುದು.</verse>
				<verse number="8">ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ, ದುಷ್ಟನು ಅದರ ಸ್ಥಳದಲ್ಲಿ ಸಿಕ್ಕಿಬೀಳುವನು.</verse>
				<verse number="9">ಒಬ್ಬ ಭಕ್ತಿಹೀನನು ಬಾಯಿಂದ ತನ್ನ ನೆರೆಯವನನ್ನು ಹಾಳು ಮಾಡುತ್ತಾನೆ, ಆದರೆ ನೀತಿವಂತನು ತಿಳುವಳಿಕೆಯ ಮೂಲಕ ಬಿಡಿಸಲಾಗುವನು.</verse>
				<verse number="10">ನೀತಿವಂತರು ಅಭಿವೃದ್ಧಿಹೊಂದಿದರೆ, ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ, ಜಯೋತ್ಸವ ಉಂಟಾಗುತ್ತದೆ.</verse>
				<verse number="11">ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಪ್ರಗತಿಯಾಗುತ್ತದೆ, ಆದರೆ ದುಷ್ಟರ ಬಾಯಿಂದ ಅದು ನಾಶವಾಗುತ್ತದೆ.</verse>
				<verse number="12">ಜ್ಞಾನವಿಲ್ಲದವನು ತನ್ನ ನೆರಯವನನ್ನು ಹೀನೈಸುತ್ತಾನೆ, ಆದರೆ ತಿಳುವಳಿಕೆಯುಳ್ಳವನು ಮೌನವಾಗಿರುತ್ತಾನೆ.</verse>
				<verse number="13">ಚಾಡಿಕೋರನು ರಹಸ್ಯಗಳನ್ನು ಬಹಿರಂಗಪಡಿಸುತ್ತಾನೆ, ಆದರೆ ನಂಬಿಗಸ್ತನು ಆ ಸಂಗತಿಯನ್ನು ಮುಚ್ಚುತ್ತಾನೆ.</verse>
				<verse number="14">ಆಲೋಚನೆ ಇಲ್ಲದೆ ಇರುವಲ್ಲಿ ಜನರು ಬೀಳುತ್ತಾರೆ, ಆದರೆ ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.</verse>
				<verse number="15">ಅನ್ಯನಿಗೆ ಹೊಣೆಯಾಗುವವನು ಹಾನಿಗೆ ಗುರಿಯಾಗುತ್ತಾನೆ, ಹೊಣೆಗಾರನಾಗಿರದವನು ಸುರಕ್ಷಿತವಾಗಿರುವನು.</verse>
				<verse number="16">ದಯೆಯುಳ್ಳ ಸ್ತ್ರೀಯು ತನ್ನ ಗೌರವವನ್ನು ಸಂಪಾದಿಸಿಕೊಳ್ಳುತ್ತಾಳೆ, ನಿಷ್ಕರುಣ ವ್ಯಕ್ತಿ ಸಂಪತ್ತನ್ನು ಮಾತ್ರ ಪಡೆದುಕೊಳ್ಳುತ್ತಾನೆ.</verse>
				<verse number="17">ದಯೆಯುಳ್ಳವನು ತನಗೆ ತಾನೇ ಒಳ್ಳೆಯದನ್ನು ಮಾಡಿಕೊಳ್ಳುತ್ತಾನೆ, ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ.</verse>
				<verse number="18">ದುಷ್ಟನು ಮೋಸದ ಸಂಬಳವನ್ನು ಸಂಪಾದಿಸುತ್ತಾನೆ, ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹವಾದ ಬಹುಮಾನವಿರುವುದು.</verse>
				<verse number="19">ನೀತಿವಂತನ ಮಾರ್ಗಗಳಲ್ಲಿ ಅಚಲವಾಗಿರುವವನು ಜೀವ ಹೊಂದುತ್ತಾನೆ, ಕೆಟ್ಟದ್ದನ್ನು ಬೆನ್ನಟ್ಟುವವನು ತನ್ನ ಮರಣವನ್ನು ಬೆನ್ನಟ್ಟುತ್ತಾನೆ.</verse>
				<verse number="20">ವಕ್ರ ಹೃದಯವುಳ್ಳವರು ಯೆಹೋವ ದೇವರಿಗೆ ಅಸಹ್ಯವಾದವರು, ಆದರೆ, ಸನ್ಮಾರ್ಗದಲ್ಲಿ ಯಥಾರ್ಥವಾಗಿ ಇರುವವರಲ್ಲಿ ಅವರು ಆನಂದಿಸುತ್ತಾರೆ.</verse>
				<verse number="21">ದುಷ್ಟನಿಗೆ ಶಿಕ್ಷೆ ತಪ್ಪುವುದಿಲ್ಲ; ನೀತಿವಂತರ ವಂಶವು ಬಿಡುಗಡೆ ಹೊಂದುವುದು.</verse>
				<verse number="22">ಹಂದಿಯ ಮೂಗಿಗೆ ಬಂಗಾರದ ಮೂಗುತಿಯು ಹೇಗೋ, ಹಾಗೆಯೇ ವಿವೇಕವಿಲ್ಲದ ಸ್ತ್ರೀಗೆ ಸೌಂದರ್ಯವು.</verse>
				<verse number="23">ನೀತಿವಂತರ ಅಪೇಕ್ಷೆಯು ಶುಭಕ್ಕಾಸ್ಪದ, ದುಷ್ಟರ ಅಪೇಕ್ಷೆಯು ತೀರ್ಪಿಗೀಡು.</verse>
				<verse number="24">ಒಬ್ಬನು ತನ್ನ ಸಂಪತ್ತನ್ನು ಉದಾರವಾಗಿ ವ್ಯಯಮಾಡಿದರೂ ಅವನು ವೃದ್ಧಿಯಾಗುತ್ತಾನೆ, ಆದರೆ ಇನ್ನೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನು ಬಡತನಕ್ಕೆ ಬರುತ್ತಾನೆ.</verse>
				<verse number="25">ಉದಾರಿಯು ಅಭಿವೃದ್ಧಿ ಹೊಂದುವನು; ಬೇರೆಯವರಿಗೆ ಚೈತನ್ಯ ಕೊಡುವವನು ಚೈತನ್ಯ ಹೊಂದುವನು.</verse>
				<verse number="26">ಧಾನ್ಯವನ್ನು ಬಚ್ಚಿಟ್ಟುಕೊಳ್ಳುವವನನ್ನು ಜನರು ಶಪಿಸುವರು; ಆದರೆ ಅದನ್ನು ಮಾರುವವನ ಮೇಲೆ ಆಶೀರ್ವಾದವು ನೆಲೆಯಾಗಿರುವುದು.</verse>
				<verse number="27">ಒಳ್ಳೆಯದನ್ನು ಸೂಕ್ಷ್ಮವಾಗಿ ಹುಡುಕುವವನು ದಯೆಯನ್ನು ಹೊಂದುತ್ತಾನೆ; ಆದರೆ ಕೇಡನ್ನು ಹುಡುಕುವವನಿಗೆ ಕೇಡೇ ಆಗುವುದು.</verse>
				<verse number="28">ತನ್ನ ಐಶ್ವರ್ಯದಲ್ಲಿ ಭರವಸೆ ಇಡುವವನು ಬಿದ್ದುಹೋಗುವನು, ಆದರೆ ನೀತಿವಂತರು ಹಸಿರೆಲೆಯ ಹಾಗೆ ಚಿಗುರುವರು.</verse>
				<verse number="29">ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಮೂರ್ಖನು ಜ್ಞಾನನಿಗೆ ಸೇವಕನಾಗಿರುವನು.</verse>
				<verse number="30">ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲುವವನು ಜ್ಞಾನಿಯಾಗಿದ್ದಾನೆ.</verse>
				<verse number="31">ಇಗೋ, ಭೂಮಿಯ ಮೇಲೆ ನೀತಿವಂತರು ತಮ್ಮ ಫಲವನ್ನು ಹೊಂದಲಿಕ್ಕಿರುವಾಗ, ದುಷ್ಟರು ಮತ್ತು ಪಾಪಿಗಳು ಎಷ್ಟೋ ಹೆಚ್ಚಾಗಿ ತಮ್ಮ ಫಲವನ್ನು ಹೊಂದುತ್ತಾರೆ.</verse>
			</chapter>
			<chapter number="12">
				<verse number="1">ಶಿಸ್ತನ್ನು ಪ್ರೀತಿಸುವವನು ಪರಿಜ್ಞಾನವನ್ನು ಪ್ರೀತಿಸುವವನಾಗಿದ್ದಾನೆ, ಆದರೆ ತಿದ್ದುವಿಕೆಯನ್ನು ಹಗೆಮಾಡುವವನು ದಡ್ಡನು.</verse>
				<verse number="2">ಒಳ್ಳೆಯವನು ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ, ಆದರೆ ಕುಯುಕ್ತಿ ಮಾಡುವವನನ್ನು ಅವರು ದುಷ್ಟನೆಂದು ಖಂಡಿಸುತ್ತಾರೆ.</verse>
				<verse number="3">ಒಬ್ಬ ಮನುಷ್ಯನು ದುಷ್ಟತನದಿಂದ ಸ್ಥಿರವಾಗುವುದಿಲ್ಲ. ಆದರೆ ನೀತಿವಂತರನ್ನು ಕಿತ್ತುಹಾಕಲಾಗುವುದಿಲ್ಲ.</verse>
				<verse number="4">ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ಆದರೆ ನಾಚಿಕೆ ಪಡಿಸುವವಳು ಅವನ ಎಲುಬುಗಳಿಗೆ ಕ್ಷಯ ರೋಗದಂತೆ ಇರುವಳು.</verse>
				<verse number="5">ನೀತಿವಂತರ ಯೋಜನೆಗಳು ನ್ಯಾಯವಾಗಿವೆ; ದುಷ್ಟರ ಸಲಹೆ ಮೋಸಭರಿತ.</verse>
				<verse number="6">ದುಷ್ಟರ ಮಾತುಗಳು ರಕ್ತಕ್ಕೆ ಹೊಂಚು, ಯಥಾರ್ಥವಂತರ ನುಡಿ ಅವರನ್ನು ಬಿಡಿಸುವುದು.</verse>
				<verse number="7">ದುಷ್ಟರು ನೆಲಕ್ಕುರುಳಿ ನಿರ್ಮೂಲರಾಗುವರು, ಆದರೆ ನೀತಿವಂತರ ಮನೆಯು ಸ್ಥಿರವಾಗಿ ನಿಲ್ಲುವುದು.</verse>
				<verse number="8">ತನ್ನ ಜ್ಞಾನಕ್ಕನುಸಾರವಾಗಿ ಮನುಷ್ಯನು ಗೌರವ ಹೊಂದುವನು; ವಕ್ರಹೃದಯವುಳ್ಳವನು ಕಡೆಗಣಿಸಲಾಗುವನು.</verse>
				<verse number="9">ಹೊಟ್ಟೆಗೆ ಕೊರತೆ ಇದ್ದು ತನ್ನನ್ನು ತಾನೇ ಘನಪಡಿಸಿಕೊಳ್ಳುವವನಿಗಿಂತಲೂ ಸಾಮಾನ್ಯ ಸೇವಕನೇ ಮೇಲು.</verse>
				<verse number="10">ನೀತಿವಂತನು ತನ್ನ ಪ್ರಾಣಿಗಳಿಗೂ ಕಾಳಜಿ ತೋರುವನು; ಆದರೆ ದುಷ್ಟರ ಕರುಣೆಯ ಕಾರ್ಯಗಳು ಕ್ರೂರತನವೇ.</verse>
				<verse number="11">ತನ್ನ ಹೊಲವನ್ನು ವ್ಯವಸಾಯ ಮಾಡುವವನು ಆಹಾರದಿಂದ ತೃಪ್ತಿಹೊಂದುವನು, ಆದರೆ ವ್ಯರ್ಥ ಕಾರ್ಯವನ್ನು ಹಿಂಬಾಲಿಸುವವನು ವಿವೇಕಶೂನ್ಯನು.</verse>
				<verse number="12">ದುಷ್ಟರು ಕೆಟ್ಟವರ ಭದ್ರಕೋಟೆಯನ್ನು ಅಪೇಕ್ಷಿಸುತ್ತಾರೆ; ಆದರೆ ನೀತಿವಂತರ ಬೇರು ಫಲವನ್ನು ಕೊಡುತ್ತದೆ.</verse>
				<verse number="13">ದುಷ್ಟನು ತನ್ನ ತಪ್ಪು ಮಾತುಗಳಿಂದ ಬಲೆಗೆ ಬೀಳುವನು, ಆದರೆ ನೀತಿವಂತರು ಇಕ್ಕಟ್ಟಿನೊಳಗಿಂದ ತಪ್ಪಿಸಿಕೊಳ್ಳುವರು.</verse>
				<verse number="14">ತನ್ನ ಬಾಯಿಯ ಫಲದ ಮುಖಾಂತರ ಒಬ್ಬ ಮನುಷ್ಯನು ಒಳ್ಳೆಯದರಿಂದ ತೃಪ್ತನಾಗುವನು, ಮನುಷ್ಯನ ಕೈಕೆಲಸಗಳು ಅವನಿಗೆ ಪ್ರತಿಫಲವನ್ನು ಕೊಡುವುವು.</verse>
				<verse number="15">ಮೂರ್ಖನ ಮಾರ್ಗವು ತನ್ನ ಕಣ್ಣುಗಳಿಗೆ ಸರಿಯಾಗಿದೆ, ಆದರೆ ಜ್ಞಾನಿಯು ಸಲಹೆಗೆ ಕಿವಿಗೊಡುವನು.</verse>
				<verse number="16">ಮೂರ್ಖನ ಕೋಪವು ತಟ್ಟನೆ ರಟ್ಟಾಗುವುದು, ಆದರೆ ಜಾಣನು ಅವಮಾನವನ್ನು ನಿರ್ಲಕ್ಷಿಸುತ್ತಾನೆ.</verse>
				<verse number="17">ಒಬ್ಬ ಪ್ರಾಮಾಣಿಕ ಸಾಕ್ಷಿ ಸತ್ಯವನ್ನು ಹೇಳುತ್ತಾನೆ, ಆದರೆ ಸುಳ್ಳುಸಾಕ್ಷಿಯು ಸುಳ್ಳನ್ನು ಹೇಳುತ್ತಾನೆ.</verse>
				<verse number="18">ಅಜಾಗರೂಕತೆಯ ಮಾತುಗಳು ಖಡ್ಗಗಳಂತೆ ಚುಚ್ಚುತ್ತವೆ, ಆದರೆ ಜ್ಞಾನವಂತರ ನಾಲಿಗೆಯು ಸ್ವಸ್ಥತೆಯನ್ನು ತರುವುದು.</verse>
				<verse number="19">ಸತ್ಯದ ತುಟಿಯು ಸದಾ ಸ್ಥಿರಗೊಳ್ಳುವುದು, ಸುಳ್ಳಾಡುವ ನಾಲಿಗೆಯು ಕ್ಷಣಿಕ.</verse>
				<verse number="20">ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಸಮಾಧಾನದ ಆಲೋಚನೆಯನ್ನು ಹೇಳುವವರಿಗೆ ಸಂತೋಷ.</verse>
				<verse number="21">ನೀತಿವಂತನಿಗೆ ಯಾವ ಕೇಡೂ ಸಂಭವಿಸದು, ಆದರೆ ದುಷ್ಟರು ಕೇಡಿನಿಂದ ತುಂಬಿಕೊಳ್ಳುವರು.</verse>
				<verse number="22">ಸುಳ್ಳಾಡುವ ತುಟಿಗಳು ಯೆಹೋವ ದೇವರಿಗೆ ಅಸಹ್ಯವಾಗಿವೆ; ಆದರೆ ಸತ್ಯವಂತರಲ್ಲಿ ಅವರು ಆನಂದಿಸುತ್ತಾರೆ.</verse>
				<verse number="23">ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುತ್ತಾನೆ; ಆದರೆ ಮೂರ್ಖನ ಹೃದಯವು ಮೂರ್ಖತನವನ್ನು ಹೇಳುತ್ತದೆ.</verse>
				<verse number="24">ಚುರುಕು ಕೈಯುಳ್ಳವನು ಆಳುವನು; ಸೋಮಾರಿಗಳು ಗುಲಾಮರಾಗುವರು.</verse>
				<verse number="25">ಆತಂಕವು ಹೃದಯವನ್ನು ಕುಗ್ಗಿಸುವುದು, ಆದರೆ ಕನಿಕರದ ಮಾತು ಹುರಿದುಂಬಿಸುವುದು.</verse>
				<verse number="26">ನೀತಿವಂತರು ತಮ್ಮ ಸ್ನೇಹಿತರನ್ನು ಎಚ್ಚರಿಕೆಯಿಂದ ಆರಿಸುತ್ತಾರೆ, ಆದರೆ ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆಯುತ್ತದೆ.</verse>
				<verse number="27">ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವುದಿಲ್ಲ, ಆದರೆ ಶ್ರಮಪಡುವವರು ಅದನ್ನು ತೃಪ್ತಿಯಿಂದ ತಿನ್ನುತ್ತಾರೆ.</verse>
				<verse number="28">ನೀತಿಯ ಮಾರ್ಗದಲ್ಲಿ ಜೀವವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.</verse>
			</chapter>
			<chapter number="13">
				<verse number="1">ಜ್ಞಾನಿಯಾದ ಮಗನು ತನ್ನ ತಂದೆಯ ಉಪದೇಶವನ್ನು ಸ್ವೀಕರಿಸುತ್ತಾನೆ; ಆದರೆ ಅಪಹಾಸ್ಯ ಮಾಡುವವನು ಗದರಿಕೆಯನ್ನು ಕೇಳುವುದಿಲ್ಲ.</verse>
				<verse number="2">ತನ್ನ ಬಾಯಿಯ ಫಲದಿಂದ ಒಬ್ಬ ಮನುಷ್ಯನು ಶ್ರೇಷ್ಠವಾದದ್ದನ್ನು ಆನಂದಿಸುತ್ತಾನೆ, ಆದರೆ ವಿಶ್ವಾಸದ್ರೋಹಿಗಳಿಗೆ ಹಿಂಸೆಯ ಹಸಿವು ಇರುತ್ತದೆ.</verse>
				<verse number="3">ತನ್ನ ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ; ತನ್ನ ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು.</verse>
				<verse number="4">ಸೋಮಾರಿಯ ಹಸಿವು ಎಂದಿಗೂ ತುಂಬುವುದಿಲ್ಲ; ಆದರೆ ಶ್ರಮಪಡುವವರ ಆಸೆಗಳು ಸಂಪೂರ್ಣವಾಗಿ ಈಡೇರುವವು.</verse>
				<verse number="5">ನೀತಿವಂತನು ಸುಳ್ಳನ್ನು ಹಗೆಮಾಡುತ್ತಾನೆ, ಆದರೆ ದುಷ್ಟರು ತಮ್ಮನ್ನು ತಾವೇ ದುರ್ವಾಸನೆಗೊಳಪಡಿಸಿಕೊಳ್ಳುತ್ತಾರೆ ಮತ್ತು ತಮ್ಮ ಮೇಲೆ ಅವಮಾನವನ್ನು ತಂದುಕೊಳ್ಳುತ್ತಾರೆ.</verse>
				<verse number="6">ನೀತಿಯು ಯಥಾರ್ಥವಂತನನ್ನು ಕಾಪಾಡುತ್ತದೆ; ಆದರೆ ದುಷ್ಟತನವು ಪಾಪಿಯನ್ನು ಕೆಡವುತ್ತದೆ.</verse>
				<verse number="7">ಬಡವನಾಗಿದ್ದರೂ ಐಶ್ವರ್ಯವಂತನಾಗಿ ನಟಿಸುವವನು ಇದ್ದಾನೆ; ಮತ್ತೊಬ್ಬನು ದರಿದ್ರನಾಗಿ ಕಾಣಿಸಿದರೂ ಬಹು ಸಿರಿವಂತನೇ.</verse>
				<verse number="8">ಐಶ್ವರ್ಯವಂತನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯದಿಂದಲೇ; ಆದರೆ ಬಡವನು ಬೆದರಿಕೆಗಳಿಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ.</verse>
				<verse number="9">ನೀತಿವಂತರ ಬೆಳಕು ಪ್ರಕಾಶಮಾನವಾಗಿ ಹೊಳೆಯುತ್ತದೆ; ದುಷ್ಟರ ದೀಪವು ಆರಿಹೋಗುವುದು.</verse>
				<verse number="10">ಎಲ್ಲಿ ಗರ್ವವೋ ಅಲ್ಲಿ ಕಲಹ; ಆದರೆ ಒಳ್ಳೆಯ ಸಲಹೆಯನ್ನು ತೆಗೆದುಕೊಳ್ಳುವವರಲ್ಲಿ ಜ್ಞಾನವು ಕಂಡುಬರುತ್ತದೆ.</verse>
				<verse number="11">ಅಪ್ರಾಮಾಣಿಕವಾಗಿ ಹೊಂದಿದ ಸಂಪತ್ತು ಕ್ಷಯಿಸುವುದು; ಪ್ರಯಾಸದಿಂದ ಕೂಡಿಸಿದ ಸಂಪತ್ತು ವೃದ್ಧಿಗೊಳ್ಳುವುದು.</verse>
				<verse number="12">ನಿರೀಕ್ಷೆ ತಡವಾದರೆ ಹೃದಯವು ಅಸ್ವಸ್ಥಗೊಳ್ಳುತ್ತದೆ; ಆಶೆಯು ಈಡೇರಿದರೆ, ಅದು ಜೀವಕರವಾದ ವೃಕ್ಷವು.</verse>
				<verse number="13">ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಗೆ ಭಯಪಡುವವನು ಪ್ರತಿಫಲ ಹೊಂದುವನು.</verse>
				<verse number="14">ಮರಣದ ಪಾಶಗಳಿಂದ ತಪ್ಪಿಸಿಕೊಳ್ಳುವುದಕ್ಕೆ ಜ್ಞಾನವಂತರ ಉಪದೇಶವು ಜೀವದ ಬುಗ್ಗೆಯಾಗಿದೆ.</verse>
				<verse number="15">ಒಳ್ಳೆಯ ಪ್ರಜ್ಞೆ ಇರುವ ವ್ಯಕ್ತಿಯನ್ನು ಗೌರವಿಸಲಾಗುತ್ತದೆ; ಆದರೆ ವಿಶ್ವಾಸದ್ರೋಹಿಯ ಮಾರ್ಗವು ನಾಶಕರವಾಗಿದೆ.</verse>
				<verse number="16">ಪ್ರತಿ ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಆದರೆ ಮೂರ್ಖನು ತನ್ನ ಮೂರ್ಖತ್ವವನ್ನು ಹೊರಗೆಡವುತ್ತಾನೆ.</verse>
				<verse number="17">ದುಷ್ಟ ದೂತನು ಕೇಡಿಗೆ ಬೀಳುತ್ತಾನೆ; ಆದರೆ ನಂಬಿಗಸ್ತನಾದ ರಾಯಭಾರಿಯು ಆರೋಗ್ಯದಾಯಕನು.</verse>
				<verse number="18">ಬೋಧನೆಯನ್ನು ಕಡೆಗಣಿಸುವವನಿಗೆ ಬಡತನವೂ, ಅವಮಾನವೂ ಬರುವುವು; ಗದರಿಕೆಯನ್ನು ಗಮನಿಸುವವನು ಸನ್ಮಾನ ಹೊಂದುವನು.</verse>
				<verse number="19">ಕನಸುಗಳು ನನಸಾಗುವುದನ್ನು ನೋಡುವುದು ಆಹ್ಲಾದಕರವಾಗಿರುತ್ತದೆ; ಕೆಟ್ಟತನದಿಂದ ತಿರುಗುವುದು ಮೂರ್ಖರಿಗೆ ಅಸಹ್ಯವಾಗಿದೆ.</verse>
				<verse number="20">ಜ್ಞಾನವಂತರ ಜೊತೆಗೆ ನಡೆಯುವವನು ಜ್ಞಾನಿಯಾಗುವನು; ಆದರೆ ಮೂರ್ಖರ ಜೊತೆಗಾರನು ಸಂಕಟಪಡುವನು.</verse>
				<verse number="21">ವಿಪತ್ತು ಪಾಪಿಗಳನ್ನು ಹಿಂಬಾಲಿಸುತ್ತದೆ; ಆದರೆ ನೀತಿವಂತರಿಗೆ ಒಳ್ಳೆಯದು ಪ್ರತಿಫಲವಾಗುವುದು.</verse>
				<verse number="22">ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಟ್ಟುಬಿಡುವನು; ಆದರೆ ಪಾಪಿಯ ಸಂಪತ್ತು ನೀತಿವಂತರಿಗಾಗಿ ಸಂಗ್ರಹವಾಗಿದೆ.</verse>
				<verse number="23">ಬಡವರಿಗೆ ಜವುಳು ಭೂಮಿಯಲ್ಲಿಯೂ ಬಹು ಬೆಳೆಯು ಸಿಕ್ಕುತ್ತದೆ; ಅನ್ಯಾಯವು ಅದನ್ನು ಹಾರಿಸಿಬಿಡುವುದು.</verse>
				<verse number="24">ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆಮಾಡುತ್ತಾನೆ; ಆದರೆ ತಮ್ಮ ಮಕ್ಕಳನ್ನು ಪ್ರೀತಿಸುವವನು ಅವರನ್ನು ಶಿಸ್ತು ಮಾಡಲು ಜಾಗರೂಕರಾಗಿರುತ್ತಾನೆ.</verse>
				<verse number="25">ನೀತಿವಂತನು ತನ್ನ ಪ್ರಾಣವು ತೃಪ್ತಿಯಾಗುವವರೆಗೆ ತಿನ್ನುತ್ತಾನೆ; ದುಷ್ಟರ ಹೊಟ್ಟೆಗೆ ಕೊರತೆಯಾಗುವುದು.</verse>
			</chapter>
			<chapter number="14">
				<verse number="1">ಜ್ಞಾನಿಯಾದ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ; ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ.</verse>
				<verse number="2">ತನ್ನ ಯಥಾರ್ಥತೆಯಲ್ಲಿ ನಡೆಯುವವನು ಯೆಹೋವ ದೇವರಿಗೆ ಭಯಪಡುತ್ತಾನೆ, ಆದರೆ ಅವರನ್ನು ತಿರಸ್ಕರಿಸುವವರು ತಮ್ಮ ಮಾರ್ಗಗಳಲ್ಲಿ ಮೋಸ ಹೋಗುತ್ತಾರೆ.</verse>
				<verse number="3">ಬುದ್ಧಿಹೀನನ ಬಾಯಿಯಲ್ಲಿ ಗರ್ವದ ಅಂಕುರವಿದೆ, ಆದರೆ ಜ್ಞಾನವಂತರ ತುಟಿಗಳು ಅವರನ್ನು ಕಾಪಾಡುವುವು.</verse>
				<verse number="4">ಎತ್ತುಗಳು ಇಲ್ಲದೆ ಇರುವಲ್ಲಿ ಗೋದಲಿಯು ಶುಚಿಯಾಗಿರುತ್ತದೆ, ಆದರೆ ಎತ್ತಿನ ಬಲದಿಂದಲೇ ಬೆಳೆಯು ಹೇರಳವಾಗಿ ವೃದ್ಧಿಯಾಗುತ್ತದೆ.</verse>
				<verse number="5">ಪ್ರಾಮಾಣಿಕ ಸಾಕ್ಷಿಯು ಸುಳ್ಳಾಡನು, ಆದರೆ ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು.</verse>
				<verse number="6">ಅಪಹಾಸ್ಯ ಮಾಡುವವನು ಜ್ಞಾನವನ್ನು ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ, ಆದರೆ ವಿವೇಚಿಸುವವನಿಗೆ ಜ್ಞಾನವು ಸುಲಭವಾಗಿದೆ.</verse>
				<verse number="7">ನೀನು ಬುದ್ಧಿಹೀನನ ತುಟಿಗಳಲ್ಲಿ ಪರಿಜ್ಞಾನವನ್ನು ಕಾಣದೆ ಹೋದರೆ, ಅವನ ಬಳಿಯಿಂದ ಹೊರಟು ಹೋಗು.</verse>
				<verse number="8">ಜಾಣನ ಜ್ಞಾನವು ತನ್ನ ಮಾರ್ಗಗಳಿಗೆ ಆಲೋಚನೆ ನೀಡುತ್ತದೆ. ಮೂಢರ ಬುದ್ಧಿಹೀನತೆಯು ಮೋಸಕರ.</verse>
				<verse number="9">ಬುದ್ಧಿಹೀನರು ಪಾಪಪರಿಹಾರವನ್ನು ಅಪಹಾಸ್ಯ ಮಾಡುವರು, ಆದರೆ ನೀತಿವಂತರಿಗೆ ದಯೆಯಿದೆ.</verse>
				<verse number="10">ಹೃದಯಕ್ಕೆ ತನ್ನ ವ್ಯಥೆಯು ಗೊತ್ತು; ಪರನು ಅದರ ಸಂತೋಷದಲ್ಲಿ ಪಾಲಾಗುವುದಿಲ್ಲ.</verse>
				<verse number="11">ದುಷ್ಟರ ಮನೆಯು ನಾಶವಾಗುವುದು, ಆದರೆ ಯಥಾರ್ಥವಂತರ ಗುಡಾರವು ಏಳಿಗೆಯಾಗುವುದು.</verse>
				<verse number="12">ಮನುಷ್ಯ ದೃಷ್ಟಿಗೆ ಸರಿ ತೋರುವ ಒಂದು ಮಾರ್ಗವಿದೆ, ಆದರೆ ಅದರ ಅಂತ್ಯವು ಮರಣದ ಮಾರ್ಗಗಳೇ.</verse>
				<verse number="13">ನಗೆಯಲ್ಲಿಯೂ ಹೃದಯವು ದುಃಖದಿಂದ ಇರುವುದು, ಅದರ ಉಲ್ಲಾಸದ ಅಂತ್ಯವು ಸಂತಾಪವೇ.</verse>
				<verse number="14">ಭ್ರಷ್ಟನು ತನ್ನ ದುಷ್ಕರ್ಮಗಳಿಂದ ದಣಿಯನು, ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.</verse>
				<verse number="15">ಅರಿವಿಲ್ಲದವರು ಯಾವ ಮಾತನ್ನಾದರೂ ನಂಬುತ್ತಾರೆ, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.</verse>
				<verse number="16">ಜ್ಞಾನಿಯು ಯೆಹೋವ ದೇವರಿಗೆ ಭಯಪಟ್ಟು ಕೆಟ್ಟತನದಿಂದ ದೂರ ಹೋಗುವನು, ಆದರೆ ಬುದ್ಧಿಹೀನನು ಯೋಚಿಸದೆ ಆತ್ಮವಿಶ್ವಾಸದಿಂದ ನಡೆಯುವನು.</verse>
				<verse number="17">ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ, ಜನರು ಕುಯುಕ್ತಿಯುಳ್ಳವನನ್ನು ಹಗೆ ಮಾಡುತ್ತಾರೆ.</verse>
				<verse number="18">ಅರಿವಿಲ್ಲದವರು ಮೂರ್ಖತನಕ್ಕೆ ಬಾಧ್ಯರಾಗುತ್ತಾರೆ, ಆದರೆ ಜಾಣರು ಪರಿಜ್ಞಾನದಿಂದ ಆವರಿಸುತ್ತಾರೆ.</verse>
				<verse number="19">ದುಷ್ಟರು ಒಳ್ಳೆಯವರಿಗೆ ಬಾಗುತ್ತಾರೆ, ದುಷ್ಟರು ನೀತಿವಂತರ ದ್ವಾರಗಳಲ್ಲಿ ಅಡ್ಡ ಬೀಳುತ್ತಾರೆ.</verse>
				<verse number="20">ಬಡವನು ಅವನ ನೆರೆಯವನಿಂದಲೇ ಕಡೆಗಣಿಸಲಾಗುವನು; ಆದರೆ ಐಶ್ವರ್ಯವಂತನಿಗೆ ಬಹುಜನ ಮಿತ್ರರು.</verse>
				<verse number="21">ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪಮಾಡುತ್ತಾನೆ, ಬಡವರ ಮೇಲೆ ಕನಿಕರ ತೋರಿಸುವವನು ಧನ್ಯನು.</verse>
				<verse number="22">ಕೆಟ್ಟದ್ದನ್ನು ಕಲ್ಪಿಸುವವರು ದಾರಿ ತಪ್ಪುವುದಿಲ್ಲವೇ? ಆದರೆ ಒಳ್ಳೆಯದನ್ನು ಕಲ್ಪಿಸುವವರಿಗೆ ಪ್ರೀತಿ ಸತ್ಯತೆಯು ಇರುವುವು.</verse>
				<verse number="23">ಎಲ್ಲಾ ಪ್ರಯಾಸದಲ್ಲಿ ಲಾಭವಿದೆ, ಹರಟೆ ಮಾತು ಬಡತನಕ್ಕೆ ಮಾತ್ರ ದಾರಿ.</verse>
				<verse number="24">ಜ್ಞಾನವಂತರ ಕಿರೀಟವೇ ಅವರ ಸಂಪತ್ತು, ಆದರೆ ಬುದ್ಧಿಹೀನರ ಬುದ್ಧಿಹೀನತೆಯು ಅವರ ಮೂರ್ಖತನವನ್ನು ನೀಡುತ್ತದೆ.</verse>
				<verse number="25">ಸತ್ಯಸಾಕ್ಷಿಯು ಪ್ರಾಣಗಳನ್ನು ರಕ್ಷಿಸುತ್ತಾನೆ, ಸುಳ್ಳುಸಾಕ್ಷಿಯು ಮೋಸಗಾರನು.</verse>
				<verse number="26">ಯೆಹೋವ ದೇವರಿಗೆ ಭಯಪಡುವವನು ಭದ್ರಕೋಟೆಯನ್ನು ಹೊಂದಿದ್ದಾನೆ. ಆತನ ಮಕ್ಕಳಿಗೆ ಆಶ್ರಯವು ಇರುವುದು.</verse>
				<verse number="27">ಯೆಹೋವ ದೇವರ ಭಯವು ಜೀವದ ಬುಗ್ಗೆಯಾಗಿದೆ. ಅದು ಮನುಷ್ಯನನ್ನು ಮರಣದ ಪಾಶಗಳಿಂದ ತಿರುಗಿಸುತ್ತದೆ.</verse>
				<verse number="28">ಜನಸಮೂಹದಲ್ಲಿ ಅರಸನ ಘನತೆ ಇದೆ. ಆದರೆ ಜನರ ಕೊರತೆಯಲ್ಲಿ ರಾಜಪುತ್ರನ ನಾಶ.</verse>
				<verse number="29">ತಾಳ್ಮೆಯುಳ್ಳವನು ಬಹು ವಿವೇಕಿ, ಮುಂಗೋಪಿಯು ಮೂರ್ಖತನವನ್ನು ಎತ್ತಿಹಿಡಿಯುವನು.</verse>
				<verse number="30">ಶಾಂತ ಹೃದಯವು ದೇಹಕ್ಕೆ ಜೀವ; ಆದರೆ ಮತ್ಸರವು ಎಲುಬುಗಳಿಗೆ ಕ್ಷಯ.</verse>
				<verse number="31">ಬಡವರನ್ನು ಹಿಂಸಿಸುವವನು, ತನ್ನ ಸೃಷ್ಟಿಕರ್ತನನ್ನು ಹೀನೈಸುವನು, ಆದರೆ ಬಡವರನ್ನು ಕನಿಕರಿಸುವವನು ದೇವರನ್ನು ಸನ್ಮಾನಿಸುವನು.</verse>
				<verse number="32">ದುಷ್ಟನು ತನ್ನ ಆಪತ್ಕಾಲದಲ್ಲಿ ಹಾಳಾಗುತ್ತಾನೆ, ಆದರೆ ನೀತಿವಂತನಿಗೆ ಮರಣದಲ್ಲಿಯೂ ಆಶ್ರಯ ಇದೆ.</verse>
				<verse number="33">ತಿಳುವಳಿಕೆಯುಳ್ಳವನ ಹೃದಯದಲ್ಲಿ ಜ್ಞಾನವು ನೆಲೆಯಾಗಿದೆ, ಆದರೆ ಮೂರ್ಖರಲ್ಲಿ ಜ್ಞಾನವು ಕಂಡುಬರುವುದಿಲ್ಲ.</verse>
				<verse number="34">ನೀತಿಯು ಜನಾಂಗವನ್ನು ವೃದ್ಧಿಮಾಡುತ್ತದೆ; ಆದರೆ ಯಾವ ಪ್ರಜೆಗಾದರೂ ಪಾಪವು ಅವಮಾನವಾಗಿದೆ.</verse>
				<verse number="35">ಜ್ಞಾನವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ಆದರೆ ಮಾನಗೇಡಿ ಸೇವಕನ ಮೇಲೆ ಅರಸನ ಕೋಪ ಎರಗುತ್ತದೆ.</verse>
			</chapter>
			<chapter number="15">
				<verse number="1">ಮೃದುವಾದ ಉತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ. ಆದರೆ ಬಿರುಸಾದ ಮಾತುಗಳು ಕೋಪವನ್ನು ಎಬ್ಬಿಸುತ್ತದೆ.</verse>
				<verse number="2">ಜ್ಞಾನಿಯ ನಾಲಿಗೆಯು ಒಳ್ಳೆಯ ಪರಿಜ್ಞಾನವನ್ನು ಹರಡುತ್ತದೆ. ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನು ಹೊರಗೆಡವುತ್ತದೆ.</verse>
				<verse number="3">ಯೆಹೋವ ದೇವರ ಕಣ್ಣುಗಳು ಪ್ರತಿಯೊಂದು ಸ್ಥಳದಲ್ಲಿ ಇವೆ. ಕೆಟ್ಟವರನ್ನೂ ಒಳ್ಳೆಯವರನ್ನೂ ನೋಡುತ್ತಾ ಇರುವರು.</verse>
				<verse number="4">ಹಿತವಾದ ನಾಲಿಗೆಯು ಜೀವವೃಕ್ಷ. ಆದರೆ ವಕ್ರ ನಾಲಿಗೆಯು ಆತ್ಮಚೈತನ್ಯವನ್ನು ನಾಶಮಾಡುವುದು.</verse>
				<verse number="5">ಮೂರ್ಖನು ತನ್ನ ತಂದೆಯ ಶಿಸ್ತನ್ನು ತಿರಸ್ಕರಿಸುತ್ತಾನೆ. ಆದರೆ ಜಾಣನು ಗದರಿಕೆಯನ್ನು ಲಕ್ಷಿಸುವನು.</verse>
				<verse number="6">ನೀತಿವಂತನ ಮನೆಯಲ್ಲಿ ಬಹಳ ಸಂಪತ್ತು. ಆದರೆ ದುಷ್ಟನ ಆದಾಯವು ವಿನಾಶ ತರುವುದು.</verse>
				<verse number="7">ಜ್ಞಾನಿಗಳ ತುಟಿಗಳು ಪರಿಜ್ಞಾನವನ್ನು ಹರಡುತ್ತವೆ. ಆದರೆ ಬುದ್ಧಿಹೀನರ ಹೃದಯವು ಹಾಗೆ ಮಾಡುವುದೇ ಇಲ್ಲ.</verse>
				<verse number="8">ದುಷ್ಟರ ಯಜ್ಞವು ಯೆಹೋವ ದೇವರಿಗೆ ಅಸಹ್ಯ. ಆದರೆ ಯಥಾರ್ಥವಂತರ ಪ್ರಾರ್ಥನೆಯು ಅವರಿಗೆ ಮೆಚ್ಚುಗೆ.</verse>
				<verse number="9">ದುಷ್ಟರ ಮಾರ್ಗವು ಯೆಹೋವ ದೇವರಿಗೆ ಅಸಹ್ಯ. ಆದರೆ ನೀತಿಯನ್ನು ಹಿಂಬಾಲಿಸುವವನನ್ನು ಅವರು ಪ್ರೀತಿಸುತ್ತಾರೆ.</verse>
				<verse number="10">ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ. ಗದರಿಕೆಯನ್ನು ಹಗೆಮಾಡುವವನು ಸಾಯುವನು.</verse>
				<verse number="11">ಮರಣವೂ ಪಾತಾಳವೂ ಯೆಹೋವ ದೇವರಿಗೆ ಕಾಣುತ್ತಿರುವಾಗ, ಮನುಷ್ಯರ ಹೃದಯಗಳು ಅವರಿಗೆ ಮುಚ್ಚುಮರೆಯೇ?</verse>
				<verse number="12">ಕುಚೋದ್ಯಗಾರನು ಬುದ್ಧಿವಾದವನ್ನು ದ್ವೇಷಿಸುತ್ತಾನೆ. ಅವನು ಜ್ಞಾನಿಗಳಿಂದ ದೂರವಿರುತ್ತಾನೆ.</verse>
				<verse number="13">ಸಂತೋಷದ ಹೃದಯವು ಹರ್ಷವುಳ್ಳ ಮುಖಭಾವ ತೋರುವುದು. ಆದರೆ ನೊಂದ ಹೃದಯವು ಆತ್ಮಚೈತನ್ಯವನ್ನು ಕುಂದಿಸುತ್ತದೆ.</verse>
				<verse number="14">ವಿವೇಕವುಳ್ಳವನ ಹೃದಯವು ಪರಿಜ್ಞಾನವನ್ನು ಹುಡುಕುತ್ತದೆ. ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನೇ ತಿನ್ನುತ್ತದೆ.</verse>
				<verse number="15">ಬಾಧಿತರ ದಿನಗಳೆಲ್ಲವೂ ದುಃಖಭರಿತ. ಆದರೆ ಸಂತೋಷ ಹೃದಯವುಳ್ಳವನಿಗೆ ನಿತ್ಯವೂ ಔತಣ.</verse>
				<verse number="16">ತೊಂದರೆಯಿಂದ ಕೂಡಿದ ದೊಡ್ಡ ಸಂಪತ್ತಿಗಿಂತ ಯೆಹೋವ ದೇವರ ಭಯದಿಂದ ಕೂಡಿದ ಅಲ್ಪವೇ ಮೇಲು.</verse>
				<verse number="17">ದ್ವೇಷವಿರುವಲ್ಲಿ ಕೊಬ್ಬಿದ ಎತ್ತಿನ ಮಾಂಸಕ್ಕಿಂತಲೂ, ಪ್ರೀತಿ ಇರುವಲ್ಲಿ ಸಸ್ಯಾಹಾರ ಊಟವೇ ಉತ್ತಮ.</verse>
				<verse number="18">ಕೋಪಿಷ್ಟನು ವಿವಾದವನ್ನು ಎಬ್ಬಿಸುವನು. ಆದರೆ ತಾಳ್ಮೆಯಿಂದ ಇರುವವನು ಜಗಳವನ್ನು ಶಾಂತಗೊಳಿಸುವನು.</verse>
				<verse number="19">ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ. ಆದರೆ ಯಥಾರ್ಥವಂತನ ಮಾರ್ಗವು ರಾಜಮಾರ್ಗ.</verse>
				<verse number="20">ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸಗೊಳಿಸುತ್ತಾನೆ. ಬುದ್ಧಿಹೀನನಾದರೋ ತನ್ನ ತಾಯಿಯನ್ನು ತಿರಸ್ಕರಿಸುತ್ತಾನೆ.</verse>
				<verse number="21">ಬುದ್ಧಿಹೀನನು ಮೂರ್ಖತನದಲ್ಲಿ ಉಲ್ಲಾಸಿಸುವನು. ತಿಳುವಳಿಕೆಯನ್ನು ಹೊಂದಿರುವವನು ನೇರ ಮಾರ್ಗದಲ್ಲಿ ನಡೆಯುತ್ತಾನೆ.</verse>
				<verse number="22">ಸಲಹೆಯ ಕೊರತೆಯಿಂದ ಯೋಜನೆಗಳು ವಿಫಲಗೊಳ್ಳುತ್ತವೆ. ಆದರೆ ಬಹುಮಂದಿ ಸಲಹೆಗಾರರಿರುವಲ್ಲಿ ಅವು ಸಫಲಗೊಳ್ಳುವುವು.</verse>
				<verse number="23">ಸೂಕ್ತವಾದ ಉತ್ತರವನ್ನು ನೀಡುವಲ್ಲಿ ಮನುಷ್ಯನು ಸಂತೋಷವನ್ನು ಕಂಡುಕೊಳ್ಳುತ್ತಾನೆ. ತಕ್ಕ ಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೆಯದು.</verse>
				<verse number="24">ಜೀವದ ಮಾರ್ಗವು ಜಾಣನನ್ನು ಮೇಲಕ್ಕೆತ್ತುವುದು. ಅದು ಅವನನ್ನು ಪಾತಾಳಕ್ಕೆ ಇಳಿಯುವದರಿಂದ ತಪ್ಪಿಸುವುದು.</verse>
				<verse number="25">ಯೆಹೋವ ದೇವರು ಗರ್ವಿಷ್ಠರ ಮನೆಯನ್ನು ಕೆಡವಿಬಿಡುವರು, ಆದರೆ ವಿಧವೆಯರ ಮೇರೆಯನ್ನು ಅವರು ನೆಲೆಗೊಳಿಸುವರು.</verse>
				<verse number="26">ದುಷ್ಟರ ಆಲೋಚನೆಯು ಯೆಹೋವ ದೇವರಿಗೆ ಅಸಹ್ಯವಾಗಿದೆ, ಆದರೆ ಸೌಜನ್ಯಶೀಲ ಮಾತುಗಳು ಅವರ ದೃಷ್ಟಿಯಲ್ಲಿ ಶುದ್ಧವಾಗಿವೆ.</verse>
				<verse number="27">ದುರಾಶೆಯುಳ್ಳವನು ತನ್ನ ಕುಟುಂಬವನ್ನು ಬಾಧಿಸುತ್ತಾನೆ. ಲಂಚವನ್ನು ಹಗೆಮಾಡುವವನು ಬದುಕುವನು.</verse>
				<verse number="28">ನೀತಿವಂತರ ಹೃದಯವು ಹೇಗೆ ಉತ್ತರಿಸಬೇಕೆಂದು ಯೋಚಿಸುತ್ತದೆ. ಆದರೆ ದುಷ್ಟರ ಬಾಯಿಯು ಕೆಟ್ಟವುಗಳನ್ನು ಹೊರಗೆಡವುತ್ತದೆ.</verse>
				<verse number="29">ಯೆಹೋವ ದೇವರು ದುಷ್ಟರಿಗೆ ದೂರ; ಆದರೆ ನೀತಿವಂತರ ಪ್ರಾರ್ಥನೆಯನ್ನು ಅವರು ಕೇಳುತ್ತಾರೆ.</verse>
				<verse number="30">ಹರ್ಷಚಿತ್ತದ ನೋಟವು ಹೃದಯಕ್ಕೆ ಸಂತೋಷವನ್ನು ತರುತ್ತದೆ. ಒಳ್ಳೆಯ ವಾರ್ತೆಯು ಎಲುಬುಗಳನ್ನು ಪುಷ್ಟಿಗೊಳಿಸುತ್ತದೆ.</verse>
				<verse number="31">ಜೀವದ ಗದರಿಕೆಗೆ ಕಿವಿಗೊಡುವವನು, ಜ್ಞಾನಿಗಳ ನಡುವೆ ವಾಸಿಸುವವನಾಗಿದ್ದಾನೆ.</verse>
				<verse number="32">ಶಿಸ್ತನ್ನು ನಿರಾಕರಿಸುವವನು, ತನಗೆ ತಾನೆ ಹಾನಿ ತಂದುಕೊಳ್ಳುತ್ತಾನೆ, ಆದರೆ ಗದರಿಕೆಗೆ ಕಿವಿಗೊಡುವವನು ವಿವೇಕವನ್ನು ಪಡೆಯುತ್ತಾನೆ.</verse>
				<verse number="33">ಯೆಹೋವ ದೇವರ ಭಯವೇ ಜ್ಞಾನವನ್ನು ಕಲಿಸುತ್ತದೆ. ನಮ್ರತೆ ಗೌರವಕ್ಕೆ ಮೊದಲು ಬರುತ್ತದೆ.</verse>
			</chapter>
			<chapter number="16">
				<verse number="1">ಮನುಷ್ಯನಲ್ಲಿ ತನ್ನ ಹೃದಯದ ಯೋಜನೆಗಳು, ಆದರೆ ಸರಿಯಾದ ಉತ್ತರಕೊಡುವ ಶಕ್ತಿ ಯೆಹೋವ ದೇವರಿಂದಲೇ ಬರುವವು.</verse>
				<verse number="2">ಮನುಷ್ಯನ ಮಾರ್ಗಗಳೆಲ್ಲಾ ತನ್ನ ದೃಷ್ಟಿಯಲ್ಲಿ ಶುದ್ಧವಾಗಿವೆ, ಆದರೆ ಯೆಹೋವ ದೇವರು ಅವನ ಉದ್ದೇಶಗಳನ್ನು ಪರೀಕ್ಷಿಸುತ್ತಾರೆ.</verse>
				<verse number="3">ನಿನ್ನ ಕಾರ್ಯಗಳನ್ನು ಯೆಹೋವ ದೇವರಿಗೆ ಒಪ್ಪಿಸು, ಆಗ ನಿನ್ನ ಯೋಜನೆಗಳು ಸ್ಥಿರವಾಗುವುವು.</verse>
				<verse number="4">ಯೆಹೋವ ದೇವರು ಎಲ್ಲವುಗಳನ್ನು ಅದರದೇ ಆದ ಉದ್ದೇಶಗಳಿಗಾಗಿ ಮಾಡಿದ್ದಾರೆ. ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿದ್ದಾರೆ.</verse>
				<verse number="5">ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಯೆಹೋವ ದೇವರಿಗೆ ಅಸಹ್ಯ. ದುಷ್ಟನಿಗೆ ಶಿಕ್ಷೆಯು ತಪ್ಪುವುದಿಲ್ಲ.</verse>
				<verse number="6">ಪ್ರೀತಿ ಮತ್ತು ಸತ್ಯತೆಗಳಿಂದ ಪಾಪಕ್ಕೆ ಪ್ರಾಯಶ್ಚಿತ್ತವಾಗುತ್ತದೆ. ಯೆಹೋವ ದೇವರ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.</verse>
				<verse number="7">ಮನುಷ್ಯನ ಮಾರ್ಗಗಳು ಯೆಹೋವ ದೇವರನ್ನು ಮೆಚ್ಚಿಸಿದಾಗ, ಅವರು ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನದಲ್ಲಿರುವಂತೆ ಮಾಡುತ್ತಾರೆ.</verse>
				<verse number="8">ಅನ್ಯಾಯದ ದೊಡ್ಡ ಆದಾಯಕ್ಕಿಂತಲೂ ನೀತಿಯೊಂದಿಗಿರುವ ಸ್ವಲ್ಪವೇ ಉತ್ತಮ.</verse>
				<verse number="9">ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ, ಆದರೆ ಯೆಹೋವ ದೇವರು ಅವನ ಹೆಜ್ಜೆಗಳನ್ನು ಸ್ಥಾಪಿಸುತ್ತಾರೆ.</verse>
				<verse number="10">ಅರಸನ ತುಟಿಗಳಲ್ಲಿ ದೈವೋಕ್ತಿ. ನ್ಯಾಯತೀರ್ಪಿನಲ್ಲಿ ಅವನ ಬಾಯಿಯು ದೋಷ ಮಾಡುವುದಿಲ್ಲ.</verse>
				<verse number="11">ನ್ಯಾಯದ ತೂಕವೂ ತಕ್ಕಡಿಯೂ ಯೆಹೋವ ದೇವರದೇ. ಚೀಲದ ತೂಕಗಳು ಅವರ ಕೈಕೆಲಸವೇ.</verse>
				<verse number="12">ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು. ಏಕೆಂದರೆ ನೀತಿಯಿಂದ ಸಿಂಹಾಸನವು ಸ್ಥಾಪಿಸಲಾಗುತ್ತದೆ.</verse>
				<verse number="13">ನೀತಿಯ ತುಟಿಗಳಲ್ಲಿ ಅರಸರು ಆನಂದಿಸುತ್ತಾರೆ, ಯಥಾರ್ಥವಾದಿಯನ್ನು ಅವರು ಪ್ರೀತಿಸುತ್ತಾರೆ.</verse>
				<verse number="14">ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ, ಆದರೆ ಜ್ಞಾನಿಯು ಅದನ್ನು ಶಮನಪಡಿಸುವನು.</verse>
				<verse number="15">ಪ್ರಕಾಶಮಾನವಾದ ಅರಸನ ಮುಖದಲ್ಲಿ ಜೀವ, ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ.</verse>
				<verse number="16">ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವುದು ಎಷ್ಟೋ ಉತ್ತಮ.</verse>
				<verse number="17">ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ಬಹುದೂರ. ತನ್ನ ಮಾರ್ಗವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿಕೊಳ್ಳುತ್ತಾನೆ.</verse>
				<verse number="18">ನಾಶನಕ್ಕೆ ಮುಂದಾಗಿ ಗರ್ವ ಹೋಗುತ್ತದೆ. ಬೀಳುವಿಕೆಯ ಮುಂಚೆ ಜಂಬದ ಆತ್ಮ.</verse>
				<verse number="19">ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳುವದಕ್ಕಿಂತ, ದೀನರೊಂದಿಗೆ ದೀನ ಆತ್ಮವುಳ್ಳವರಾಗಿ ಇರುವುದು ಉತ್ತಮ.</verse>
				<verse number="20">ಕಾರ್ಯವನ್ನು ಜ್ಞಾನದಿಂದ ನಡೆಸುವವನು ಒಳ್ಳೆಯದನ್ನು ಪಡೆಯುವನು. ಯೆಹೋವ ದೇವರಲ್ಲಿ ಭರವಸೆ ಇಡುವವನು ಧನ್ಯನು.</verse>
				<verse number="21">ಹೃದಯದಲ್ಲಿ ಜ್ಞಾನವಂತರು ವಿವೇಚನೆಯುಳ್ಳವರು ಎಂದು ಕರೆಯಲಾಗುವರು. ತುಟಿಗಳ ಮಾಧುರ್ಯ ಮನವೊಲಿಸುವವು.</verse>
				<verse number="22">ವಿವೇಕವು ವಿವೇಕಿಗಳಿಗೆ ಜೀವನದ ಬುಗ್ಗೆ, ಆದರೆ ಮೂರ್ಖತನವು ಮೂರ್ಖರಿಗೆ ಶಿಕ್ಷೆಯನ್ನು ತರುತ್ತದೆ.</verse>
				<verse number="23">ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ, ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವುದು.</verse>
				<verse number="24">ವಿನಯದ ಮಾತುಗಳು ಜೇನುಗೂಡು ಪ್ರಾಣಕ್ಕೆ ಮಧುರವೂ, ಎಲುಬುಗಳಿಗೆ ಕ್ಷೇಮವೂ ಆಗಿವೆ.</verse>
				<verse number="25">ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು, ಆದರೆ ಅದರ ಅಂತ್ಯವು ಮರಣದ ಮಾರ್ಗವೇ.</verse>
				<verse number="26">ದುಡಿಯುವವನಿಗೆ ಅವನ ಹಸಿವೇ ದುಡಿಯುವಂತೆ ಮಾಡುವುದು, ಅವನ ಹಸಿವು ಅವನನ್ನು ಒತ್ತಾಯ ಮಾಡುವುದು.</verse>
				<verse number="27">ಭಕ್ತಿಹೀನನು ಕೇಡಿನ ಕುಣಿ ಅಗೆಯುತ್ತಾನೆ. ಅವನ ತುಟಿಗಳು ಉರಿಯುವ ಬೆಂಕಿಯಂತಿವೆ.</verse>
				<verse number="28">ಮೂರ್ಖನು ಜಗಳವನ್ನು ಬಿತ್ತುತ್ತಾನೆ. ಚಾಡಿಕೋರನು ಪ್ರಮುಖ ಸ್ನೇಹಿತರನ್ನು ಅಗಲಿಸುತ್ತಾನೆ.</verse>
				<verse number="29">ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ, ದುರ್ಮಾರ್ಗಕ್ಕೆ ಎಳೆಯುತ್ತಾನೆ.</verse>
				<verse number="30">ವಕ್ರಬುದ್ಧಿಯ ಒಳಸಂಚುಗಳಿಗೆ ಅವನು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುತ್ತಾನೆ. ತನ್ನ ತುಟಿಗಳನ್ನು ಕದಲಿಸುತ್ತಾ ಕೆಟ್ಟದ್ದು ಸಂಭವಿಸುವಂತೆ ಮಾಡುತ್ತಾನೆ.</verse>
				<verse number="31">ನರೆಗೂದಲು ಉಜ್ವಲ ಕಿರೀಟ, ಅದು ನೀತಿಯ ಜೀವಿತದಲ್ಲಿ ಒದಗುತ್ತದೆ.</verse>
				<verse number="32">ದೀರ್ಘಶಾಂತನು ಶೂರರಿಗಿಂತಲೂ ಶ್ರೇಷ್ಠ, ತನ್ನ ಮನಸ್ಸನ್ನು ಆಳುವವನು, ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.</verse>
				<verse number="33">ಉಡಿಯಲ್ಲಿ ಚೀಟು ಹಾಕಬಹುದು, ಆದರೆ ಪ್ರತಿ ತೀರ್ಪು ಯೆಹೋವ ದೇವರದ್ದೇ.</verse>
			</chapter>
			<chapter number="17">
				<verse number="1">ವಿವಾದದೊಂದಿಗೆ ತುಂಬಿದ ಔತಣದ ಮನೆಗಿಂತ, ಶಾಂತಿ ಸಮಾಧಾನದ ಒಣ ತುತ್ತು ಮೇಲು.</verse>
				<verse number="2">ನಾಚಿಕೆಪಡಿಸುವ ಮಗನ ಮೇಲೆ ಜಾಣನಾದ ಸೇವಕನು ಆಳುವವನಾಗಿ ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು.</verse>
				<verse number="3">ಸೋಸುವುದಕ್ಕೆ ಬೆಳ್ಳಿಗೆ ಕುಲುಮೆ ಪುಟ, ಬಂಗಾರಕ್ಕೆ ಆವಿಗೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರಿಶೋಧಿಸುತ್ತಾರೆ.</verse>
				<verse number="4">ಕೇಡು ಮಾಡುವವನು ಕೆಟ್ಟ ಮಾತುಗಳಿಗೆ ಕಿವಿಗೊಡುತ್ತಾನೆ; ಸುಳ್ಳುಗಾರನು ನೀಚವಾದ ನಾಲಿಗೆಗೆ ಕಿವಿಗೊಡುವನು.</verse>
				<verse number="5">ಬಡವರನ್ನು ಹಾಸ್ಯಮಾಡುವವನು, ತನ್ನನ್ನು ಸೃಷ್ಟಿಸಿದ ಯೆಹೋವ ದೇವರನ್ನು ನಿಂದಿಸುತ್ತಾನೆ; ಬೇರೆಯವರ ವಿಪತ್ತುಗಳಿಗೆ ಸಂತೋಷಿಸುವವನು ಶಿಕ್ಷೆಯನ್ನು ಹೊಂದುವನು.</verse>
				<verse number="6">ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆತಾಯಿಗಳೇ.</verse>
				<verse number="7">ಉತ್ತಮವಾದ ಪದಗಳು ಮೂರ್ಖನಿಗೆ ಸೂಕ್ತವಲ್ಲ; ಆಳುವವನಿಗೆ ಸುಳ್ಳಾಡುವ ತುಟಿಗಳು ಇನ್ನೂ ಎಷ್ಟೋ ಆಯುಕ್ತವಲ್ಲವೇ.</verse>
				<verse number="8">ಕೊಡುವವನ ಕಣ್ಣಿಗೆ ಲಂಚವು ಆಕರ್ಷಣೆಯಾಗಿದೆ; ಪ್ರತಿ ತಿರುವಿನಲ್ಲಿಯೂ ಯಶಸ್ಸು ಬರುತ್ತದೆ ಎಂದು ಅವರು ಭಾವಿಸುತ್ತಾರೆ.</verse>
				<verse number="9">ದೋಷವನ್ನು ಕ್ಷಮಿಸುವವನು ಪ್ರೀತಿಯನ್ನು ಹುಡುಕುತ್ತಾನೆ; ಆದರೆ ದೋಷವನ್ನು ಎತ್ತಿ ಆಡುವವನು ಸ್ನೇಹಿತರಿಂದ ಪ್ರತ್ಯೇಕಗೊಳ್ಳುತ್ತಾನೆ.</verse>
				<verse number="10">ಬುದ್ಧಿಹೀನನ ಬೆನ್ನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟುತ್ತದೆ.</verse>
				<verse number="11">ತಿರುಗಿ ಬೀಳುವವನು ಕೆಟ್ಟದ್ದಕ್ಕೇ ತವಕಪಡುತ್ತಾನೆ; ಆದಕಾರಣ ಮರಣ ದೂತರನ್ನು ಅವನ ವಿರುದ್ಧ ಕಳುಹಿಸಲಾಗುವದು.</verse>
				<verse number="12">ತನ್ನ ಮೂಢತೆಯಲ್ಲಿರುವ ಬುದ್ಧಿಹೀನನನ್ನು ಸಂಧಿಸುವುದಕ್ಕಿಂತ ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಸಂಧಿಸುವುದು ಮೇಲು.</verse>
				<verse number="13">ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆಯಿಂದ ಕೇಡು ತೊಲಗುವುದೇ ಇಲ್ಲ.</verse>
				<verse number="14">ಕಲಹದ ಪ್ರಾರಂಭವು ಆಣೆಕಟ್ಟು ಒಡೆದಂತೆ ಇರುವುದು; ಆದಕಾರಣ ಆ ಕಲಹಕ್ಕೆ ಕೈಹಾಕುವುದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.</verse>
				<verse number="15">ದುಷ್ಟರನ್ನು ನೀತಿವಂತರೆಂದು ನಿರ್ಣಯಿಸುವವನು, ನೀತಿವಂತರನ್ನು ಖಂಡಿಸುವವನೂ ಇವರಿಬ್ಬರೂ ಯೆಹೋವ ದೇವರಿಗೆ ಅಸಹ್ಯ.</verse>
				<verse number="16">ಜ್ಞಾನವನ್ನು ಸಂಪಾದಿಸುವುದಕ್ಕೆ ಬುದ್ಧಿಹೀನನ ಕೈಯಲ್ಲಿ ಹಣ ಏಕೆ? ಅವನಿಗೆ ಕಲಿಯಲು ಮನಸ್ಸಿಲ್ಲವಲ್ಲ.</verse>
				<verse number="17">ಸ್ನೇಹಿತನು ಎಲ್ಲಾ ಸಮಯದಲ್ಲಿ ಪ್ರೀತಿಸುತ್ತಾನೆ; ಆಪತ್ತಿನಲ್ಲಿ ಸಹಾಯಮಾಡುವಗೋಸ್ಕರ ಸಹೋದರನು ಹುಟ್ಟಿದ್ದಾನೆ.</verse>
				<verse number="18">ಬುದ್ಧಿಹೀನನು ಕೈ ಕುಲುಕಿ ತನ್ನ ನೆರೆಯವನಿಗೆ ಜಾಮಿನನಾಗುತ್ತಾನೆ.</verse>
				<verse number="19">ಕಲಹವನ್ನು ಪ್ರೀತಿಮಾಡುವವನು ಪಾಪವನ್ನು ಪ್ರೀತಿಮಾಡುತ್ತಾನೆ; ತನ್ನ ಗೋಡೆಯನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಆಮಂತ್ರಿಸುತ್ತಾನೆ.</verse>
				<verse number="20">ವಕ್ರಹೃದಯವುಳ್ಳವನು ಸಮೃದ್ಧಿಯನ್ನು ಹೊಂದುವುದಿಲ್ಲ; ಮೋಸದ ನಾಲಿಗೆಯುಳ್ಳವನು ಹಾನಿಗೆ ಬೀಳುವನು.</verse>
				<verse number="21">ಬುದ್ಧಿಹೀನ ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವುದಿಲ್ಲ.</verse>
				<verse number="22">ಹರ್ಷಹೃದಯವು ಒಳ್ಳೆಯ ಔಷಧ; ಆದರೆ ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.</verse>
				<verse number="23">ನ್ಯಾಯದ ಮಾರ್ಗಗಳನ್ನು ತಿರುಗಿಸಿಬಿಡುವುದಕ್ಕೆ ದುಷ್ಟನು ಗುಪ್ತವಾಗಿ ಲಂಚವನ್ನು ತೆಗೆದುಕೊಳ್ಳುತ್ತಾನೆ.</verse>
				<verse number="24">ವಿವೇಕಿಯು ಜ್ಞಾನವನ್ನು ತನ್ನ ಮುಂದೆ ಇಟ್ಟುಕೊಳ್ಳುತ್ತಾನೆ. ಆದರೆ ಬುದ್ಧಿಹೀನ ಕಣ್ಣುಗಳು ಭೂಮಿಯ ಅಂತ್ಯಗಳಲ್ಲಿ ಅಲೆಯುವವು.</verse>
				<verse number="25">ಬುದ್ಧಿಹೀನನಾದ ಮಗನು ತನ್ನ ತಂದೆಗೆ ದುಃಖವೂ, ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ.</verse>
				<verse number="26">ನೀತಿವಂತನಿಗೆ ದಂಡ ವಿಧಿಸುವುದು ಒಳ್ಳೆಯದಲ್ಲದಿದ್ದರೆ, ಖಂಡಿತವಾಗಿಯೂ ಪ್ರಾಮಾಣಿಕ ಅಧಿಕಾರಿಗಳನ್ನು ಹೊಡೆಯುವುದು ಸರಿಯಲ್ಲ.</verse>
				<verse number="27">ಪರಿಜ್ಞಾನ ಹೊಂದಿರುವವನು ಮಿತವಾಗಿ ಮಾತನಾಡುತ್ತಾನೆ; ತಿಳುವಳಿಕೆಯನ್ನು ಹೊಂದಿರುವವನು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.</verse>
				<verse number="28">ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆನಿಸಿಕೊಳ್ಳುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿ ಎನಿಸಿಕೊಳ್ಳುವನು.</verse>
			</chapter>
			<chapter number="18">
				<verse number="1">ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ ಸಮಸ್ತ ಸುಜ್ಞಾನಕ್ಕೂ ರೇಗುವನು.</verse>
				<verse number="2">ವಿವೇಕದಲ್ಲಿ ಬುದ್ಧಿಹೀನನಿಗೆ ಸಂತೋಷವಿಲ್ಲ; ಆದರೆ ತನ್ನ ಹೃದಯವನ್ನು ಹೊರಪಡಿಸಿಕೊಳ್ಳುವುದೇ ಅವನಿಗೆ ಸಂತೋಷ.</verse>
				<verse number="3">ದುಷ್ಟತ್ವವು ಬಂದಾಗ ತಾತ್ಸಾರವೂ, ಅವಮಾನದೊಂದಿಗೆ ನಿಂದೆಯೂ ಬರುತ್ತವೆ.</verse>
				<verse number="4">ಮನುಷ್ಯನ ಬಾಯಿಯ ಮಾತುಗಳು ಆಳವಾದ ನೀರಿನಂತೆಯೂ, ಜ್ಞಾನದ ಬುಗ್ಗೆಯು ಹರಿಯುವ ತೊರೆಯಂತೆಯೂ ಇವೆ.</verse>
				<verse number="5">ನ್ಯಾಯತೀರ್ಪಿನಲ್ಲಿ ನೀತಿವಂತರನ್ನು ಕೆಡವುವಂತೆ, ದುಷ್ಟರಿಗೆ ಪಕ್ಷಪಾತ ತೋರಿಸುವುದು ಯುಕ್ತವಲ್ಲ.</verse>
				<verse number="6">ಜ್ಞಾನಹೀನನ ತುಟಿಗಳು ಕಲಹದಲ್ಲಿ ಸೇರುವುದರಿಂದ ಏಟುಗಳನ್ನು ತಿನ್ನುವುದಕ್ಕೆ ಅವನ ಬಾಯಿಯು ಕೂಗಿಕೊಳ್ಳುತ್ತದೆ.</verse>
				<verse number="7">ಬುದ್ಧಿಹೀನನ ಬಾಯಿಯು ಅವನ ನಾಶನ; ಅವನ ತುಟಿಗಳು ಅವನ ಪ್ರಾಣಕ್ಕೆ ಪಾಶ.</verse>
				<verse number="8">ಚಾಡಿಕೋರನ ಮಾತುಗಳು ರುಚಿಕರವಾದ ತುತ್ತುಗಳು; ಅವು ಹೊಟ್ಟೆಯ ಒಳಭಾಗಗಳಿಗೆ ಇಳಿದು ಹೋಗುವುವು.</verse>
				<verse number="9">ತನ್ನ ಕೆಲಸದಲ್ಲಿ ಸೋಮಾರಿಯಾಗಿರುವವನು, ಕೆಡುಕನಿಗೆ ಸಹೋದರನಾಗಿದ್ದಾನೆ.</verse>
				<verse number="10">ಯೆಹೋವ ದೇವರ ನಾಮವು ಬಲವಾದ ಬುರುಜು; ನೀತಿವಂತನು ಅದರೊಳಕ್ಕೆ ಓಡಿ ಭದ್ರವಾಗಿರುತ್ತಾನೆ.</verse>
				<verse number="11">ಧನವಂತರ ಸಂಪತ್ತು ಅವರಿಗೆ ಬಲವಾದ ಪಟ್ಟಣವೂ ಅವನ ಕಲ್ಪನೆಯಲ್ಲಿ ಅದು ಸುರಕ್ಷತೆಯ ಎತ್ತರವಾದ ಗೋಡೆಯೂ ಆಗಿದೆ.</verse>
				<verse number="12">ನಾಶನಕ್ಕೆ ಮುಂಚೆ ಮನುಷ್ಯನ ಹೃದಯವು ಗರ್ವಿಷ್ಠವಾಗಿರುವುದು; ಸನ್ಮಾನಕ್ಕೆ ಮುಂಚೆ ದೀನತ್ವವು ಬರುತ್ತದೆ.</verse>
				<verse number="13">ಕೇಳಿಸಿಕೊಳ್ಳದೆ ಉತ್ತರ ಕೊಡುವವರಿಗೆ ಅದು ಮೂರ್ಖತನವೂ, ಅವಮಾನವೂ ಆಗಿದೆ.</verse>
				<verse number="14">ಮನುಷ್ಯನ ಆತ್ಮವು ಅಸ್ವಸ್ಥತೆಯನ್ನು ಸಹಿಸುವುದು; ಆದರೆ ಮುರಿದ ಆತ್ಮವನ್ನು ಸಹಿಸುವವರು ಯಾರು?</verse>
				<verse number="15">ವಿವೇಕಿಯ ಹೃದಯವು ತಿಳುವಳಿಕೆಯನ್ನು ಸಂಪಾದಿಸುತ್ತದೆ; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುತ್ತದೆ.</verse>
				<verse number="16">ಕಾಣಿಕೆಯನ್ನು ಕೊಡುವವನಿಗೆ ಬಾಗಿಲು ತೆರೆಯುತ್ತದೆ; ಅದು ದೊಡ್ಡವರ ಸನ್ನಿಧಾನಕ್ಕೂ ಅವನನ್ನು ಕರೆದುಕೊಂಡು ಹೋಗುತ್ತದೆ.</verse>
				<verse number="17">ಪ್ರತಿವಾದಿ ಬಂದು ಪರಿಶೀಲಿಸುವವರೆಗೆ, ಮೊದಲು ವಾದಿಸುವವನು ನ್ಯಾಯವಂತನೆಂದು ತೋರುತ್ತಾನೆ.</verse>
				<verse number="18">ಚೀಟು ಹಾಕುವುದರಿಂದ ವ್ಯಾಜ್ಯಶಮನ; ಬಲಿಷ್ಠ ಪ್ರತಿವಾದಿಗಳ ವಿವಾದಗಳನ್ನು ಸಹ ಬಗೆಹರಿಸುತ್ತದೆ.</verse>
				<verse number="19">ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಬೇಸರಗೊಂಡ ಸಹೋದರನನ್ನು ಗೆಲ್ಲುವುದು ಕಷ್ಟಕರ; ಅವರ ಕಲಹಗಳು ಕೋಟೆಯ ಬಾಗಿಲಿಗೆ ಅಗುಳಿಗಳಂತೆ ಇವೆ.</verse>
				<verse number="20">ತನ್ನ ಬಾಯಿಯ ಫಲದಿಂದ ಮನುಷ್ಯನ ಹೊಟ್ಟೆಯು ತೃಪ್ತಿ ಹೊಂದುವುದು; ತನ್ನ ತುಟಿಗಳ ಆದಾಯದಿಂದ ಅವನು ತೃಪ್ತಿಹೊಂದುವನು.</verse>
				<verse number="21">ನಾಲಿಗೆಗೆ ಮರಣ ಮತ್ತು ಜೀವದ ಶಕ್ತಿಯಿದೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.</verse>
				<verse number="22">ಪತ್ನಿಯನ್ನು ದೊರಕಿಸಿಕೊಂಡವನು ಒಳ್ಳೆಯದನ್ನು ಸಂಪಾದಿಸಿದವನಾಗಿ, ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ.</verse>
				<verse number="23">ಬಡವನು ಕರುಣೆಗಾಗಿ ವಿಜ್ಞಾಪನೆ ಮಾಡುತ್ತಾನೆ; ಆದರೆ ಧನಿಕನು ಕಠಿಣವಾಗಿ ಉತ್ತರ ಕೊಡುತ್ತಾರೆ.</verse>
				<verse number="24">ವಿಶ್ವಾಸಕ್ಕೆ ಅರ್ಹರಲ್ಲದ ಸ್ನೇಹಿತರನ್ನು ಹೊಂದಿರುವವನು ಶೀಘ್ರವೇ ನಾಶವಾಗುತ್ತಾನೆ; ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.</verse>
			</chapter>
			<chapter number="19">
				<verse number="1">ಬುದ್ಧಿಹೀನನ ವಕ್ರ ತುಟಿಗಳಿಗಿಂತ, ನಿರ್ದೋಷವಾಗಿ ನಡೆಯುವ ಬಡವನು ಉತ್ತಮ.</verse>
				<verse number="2">ಪರಿಜ್ಞಾನವಿಲ್ಲದ ಆಸಕ್ತಿಯು ಯುಕ್ತವಲ್ಲ; ತನ್ನ ಹೆಜ್ಜೆಗಳಲ್ಲಿ ದುಡುಕುವವನು ದಾರಿ ತಪ್ಪುವನು.</verse>
				<verse number="3">ಮನುಷ್ಯನ ಬುದ್ಧಿಹೀನತೆ ಅವನ ದುರ್ಗತಿಗೆ ದಾರಿಯಾಗಿದೆ, ಆದರೂ ಅವನ ಹೃದಯವು ಯೆಹೋವ ದೇವರಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.</verse>
				<verse number="4">ಸಂಪತ್ತು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳುತ್ತದೆ; ಆದರೆ ಬಡವನು ತನ್ನ ಆಪ್ತಸ್ನೇಹಿತನಿಂದ ದೂರವಾಗುತ್ತಾನೆ.</verse>
				<verse number="5">ಸುಳ್ಳುಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರಲಾರನು.</verse>
				<verse number="6">ಅನೇಕರು ಅಧಿಪತಿಯಿಂದ ಸಹಾಯ ಪಡೆಯುತ್ತಾರೆ. ಕಾಣಿಕೆಗಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.</verse>
				<verse number="7">ಬಡವನ ಬಂಧುಗಳೆಲ್ಲರು ಅವನನ್ನು ಹಗೆ ಮಾಡುತ್ತಾರೆ; ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಮೊರೆಯಿಟ್ಟು ಹಿಂಬಾಲಿಸಿದರೂ ಅವನಿಗೆ ಏನೂ ದೊರಕದು.</verse>
				<verse number="8">ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣವನ್ನೇ ಪ್ರೀತಿಸುತ್ತಾನೆ; ತಿಳುವಳಿಕೆಯನ್ನು ಪ್ರೀತಿಸುವವನು ಶೀಘ್ರದಲ್ಲೇ ಏಳಿಗೆ ಹೊಂದುತ್ತಾನೆ.</verse>
				<verse number="9">ಸುಳ್ಳುಸಾಕ್ಷಿಯು ಶಿಕ್ಷೆಹೊಂದದೇ ಇರುವುದಿಲ್ಲ; ಸುಳ್ಳಾಡುವವನು ಹಾಳಾಗಿ ಹೋಗುವನು.</verse>
				<verse number="10">ಬುದ್ಧಿಹೀನನಿಗೆ ಭೋಗಜೀವನವು ಯುಕ್ತವಲ್ಲ; ಅಧಿಪತಿಗಳ ಮೇಲೆ ದೊರೆತನ ಮಾಡುವುದು ಸೇವಕನಿಗೆ ಯುಕ್ತವೇ ಅಲ್ಲ.</verse>
				<verse number="11">ಮನುಷ್ಯನ ಜ್ಞಾನವು ತಾಳ್ಮೆಯನ್ನು ನೀಡುತ್ತದೆ; ಅಪರಾಧವನ್ನು ಲಕ್ಷಿಸದೆ ಇರುವುದು ಅವನಿಗೆ ಮಹಿಮೆಯಾಗಿದೆ.</verse>
				<verse number="12">ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಆದರೆ ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.</verse>
				<verse number="13">ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕರನು; ಜಗಳವಾಡುವ ಹೆಂಡತಿ ಯಾವಾಗಲೂ ತೊಟ್ಟಿಕ್ಕುವ ಹನಿ.</verse>
				<verse number="14">ಮನೆಯೂ ಸಂಪತ್ತೂ ಪಿತೃಗಳ ಸ್ವಾಸ್ತ್ಯವು; ವಿವೇಕಿಯಾದ ಹೆಂಡತಿಯು ಯೆಹೋವ ದೇವರಿಂದಲೇ.</verse>
				<verse number="15">ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುತ್ತದೆ; ಸೋಮಾರಿಯು ಹಸಿವೆಗೊಳ್ಳುವನು.</verse>
				<verse number="16">ಯಾರು ಆಜ್ಞೆಗಳನ್ನು ಪಾಲಿಸುತ್ತಾನೋ ಅವನು ತನ್ನ ಜೀವವನ್ನು ಉಳಿಸಿಕೊಳ್ಳುತ್ತಾನೆ, ಆದರೆ ಅವುಗಳನ್ನು ಅಸಡ್ಡೆ ಮಾಡುವವನು ಸಾಯುವನು.</verse>
				<verse number="17">ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ; ಆತನು ಅವನ ಉಪಕಾರಕ್ಕಾಗಿ ಪ್ರತ್ಯುಪಕಾರ ಮಾಡುವನು.</verse>
				<verse number="18">ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಮರಣಕ್ಕೆ ನೀನು ಕಾರಣನಾಗಬೇಡ.</verse>
				<verse number="19">ಕೋಪಿಷ್ಟನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ, ತಿರುಗಿ ನೀನು ಬಿಡಿಸಬೇಕಾಗುವುದು.</verse>
				<verse number="20">ಬುದ್ಧಿವಾದವನ್ನು ಕೇಳಿ, ಶಿಕ್ಷಣವನ್ನು ಅಂಗೀಕರಿಸು; ಕಡೆಯಲ್ಲಿ ನೀನು ಜ್ಞಾನಿಯಾಗುವೆ.</verse>
				<verse number="21">ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ; ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು.</verse>
				<verse number="22">ನಿಷ್ಠೆಯು ಮನುಷ್ಯನನ್ನು ಆಕರ್ಷಕನನ್ನಾಗಿ ಮಾಡುತ್ತದೆ. ಬಡವನು ಸುಳ್ಳುಗಾರನಿಗಿಂತ ಲೇಸು.</verse>
				<verse number="23">ಯೆಹೋವ ದೇವರ ಭಯವು ಜೀವದಾಯಕವು; ಆಗ ಅವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವುದಿಲ್ಲ.</verse>
				<verse number="24">ಮೈಗಳ್ಳನು ಪಾತ್ರೆಯೊಳಗೆ ತನ್ನ ಕೈಯನ್ನು ಮುಳುಗಿಸಿ, ಅವನು ಅದನ್ನು ಮತ್ತೆ ತನ್ನ ಬಾಯಿಗೆ ತರುವುದಿಲ್ಲ!</verse>
				<verse number="25">ಪರಿಹಾಸ್ಯಗಾರನನ್ನು ಹೊಡೆದರೆ, ಮುಗ್ಧರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿದರೆ, ಅವನು ಪರಿಜ್ಞಾನವನ್ನು ಗ್ರಹಿಸುವನು.</verse>
				<verse number="26">ಯಾರು ತಂದೆಯನ್ನು ದೋಚಿಕೊಂಡು ತಾಯಿಯನ್ನು ಓಡಿಸುವರೋ ನಾಚಿಕೆಯನ್ನುಂಟುಮಾಡಿ, ನಿಂದೆಯನ್ನು ತರುತ್ತಾರೆ.</verse>
				<verse number="27">ಮಗನೇ, ನೀನು ಬುದ್ಧಿವಾದಕ್ಕೆ ಲಕ್ಷ್ಯಕೊಡದಿದ್ದರೆ, ಪರಿಜ್ಞಾನದ ಮಾತುಗಳಿಂದ ದಾರಿತಪ್ಪುವೆ.</verse>
				<verse number="28">ಭ್ರಷ್ಟನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿ ಮಾಡುತ್ತದೆ; ದುಷ್ಟನ ಬಾಯಿಯು ದ್ರೋಹವನ್ನು ನುಂಗುವುದು.</verse>
				<verse number="29">ಪರಿಹಾಸ್ಯಗಾರರಿಗೆ ನ್ಯಾಯ ತೀರ್ಪುಗಳೂ, ಬುದ್ಧಿಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.</verse>
			</chapter>
			<chapter number="20">
				<verse number="1">ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ; ಇವುಗಳಿಂದ ಮೋಸ ಹೋದವನು ಜ್ಞಾನಿಯಲ್ಲ.</verse>
				<verse number="2">ಅರಸನ ಭಯವು ಸಿಂಹದ ಘರ್ಜನೆಯಂತಿದೆ; ಅವನ ಕೋಪವನ್ನೆಬ್ಬಿಸುವವರು, ತಮ್ಮ ಪ್ರಾಣಕ್ಕೆ ಅಪಾಯ ತಂದುಕೊಳ್ಳುವರು.</verse>
				<verse number="3">ಕಲಹವನ್ನು ತಡೆಯುವವನು, ಮಾನಕ್ಕೆ ಯೋಗ್ಯನು; ಆದರೆ ಬುದ್ಧಿಹೀನನು ಮಾತ್ರ ಜಗಳವಾಡಲು ಒತ್ತಾಯಿಸುತ್ತಾನೆ.</verse>
				<verse number="4">ಮೈಗಳ್ಳನು ಮಳೆಗಾಲದಲ್ಲಿ ಉಳುಮೆ ಮಾಡುವುದಿಲ್ಲ; ಆದಕಾರಣ ಸುಗ್ಗಿಯಲ್ಲಿ ಅವನು ಅಪೇಕ್ಷಿಸಿದರೂ ಏನೂ ಸಿಕ್ಕುವುದಿಲ್ಲ.</verse>
				<verse number="5">ಮನುಷ್ಯನ ಹೃದಯದ ಆಲೋಚನೆಯು ಆಳವಾದ ಬಾವಿಯ ನೀರಿನಂತಿದೆ; ವಿವೇಕಿಯು ಅದನ್ನು ಸೇದುವನು.</verse>
				<verse number="6">ಅನೇಕರಲ್ಲಿ ಪ್ರತಿಯೊಬ್ಬನು ತನ್ನ ಸ್ವಂತ ಪ್ರಾಮಾಣಿಕತೆಯನ್ನು ಸಾರುವನು; ಆದರೆ ನಂಬಿಗಸ್ತನಾದ ಮನುಷ್ಯನನ್ನು ಯಾರು ಕಂಡುಕೊಳ್ಳಬಲ್ಲರು?</verse>
				<verse number="7">ನೀತಿವಂತನು ನಿರ್ದೋಷವಾಗಿ ಜೀವಿಸುತ್ತಾನೆ; ಅವನನ್ನು ಅನುಸರಿಸುವ ಅವನ ಮಕ್ಕಳು ಆಶೀರ್ವಾದ ಹೊಂದುವರು.</verse>
				<verse number="8">ಅರಸನು ತನ್ನ ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವಾಗ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.</verse>
				<verse number="9">“ನನ್ನ ಹೃದಯವನ್ನು ಶುದ್ಧವಾಗಿ ಇಟ್ಟುಕೊಂಡಿದ್ದೇನೆ. ನಾನು ಶುದ್ಧನೂ ಪಾಪರಹಿತನೂ,” ಎಂದು ಯಾರು ಹೇಳಬಲ್ಲರು?</verse>
				<verse number="10">ಮೋಸದ ತೂಕಗಳೂ, ಮೋಸದ ಅಳತೆಗಳೂ ಇವೆರಡೂ ಯೆಹೋವ ದೇವರಿಗೆ ಅಸಹ್ಯ.</verse>
				<verse number="11">ಚಿಕ್ಕ ಮಕ್ಕಳಾದರೋ ತಮ್ಮ ಕ್ರಿಯೆಗಳಿಂದಲೇ, ತಾವು ಶುದ್ಧರೋ ಯಥಾರ್ಥರೋ ಎಂಬುದನ್ನು ತೋರ್ಪಡಿಸಿಕೊಳ್ಳುತ್ತಾರೆ.</verse>
				<verse number="12">ಕೇಳುವ ಕಿವಿ, ನೋಡುವ ಕಣ್ಣು ಇವೆರಡನ್ನು ಯೆಹೋವ ದೇವರು ಉಂಟುಮಾಡಿದ್ದಾನೆ.</verse>
				<verse number="13">ನೀವು ನಿದ್ರೆಯನ್ನು ಪ್ರೀತಿಸಿದರೆ, ನೀವು ಬಡತನದಲ್ಲಿ ಕೊನೆಗೊಳ್ಳುತ್ತೀರಿ; ನಿಮ್ಮ ಕಣ್ಣುಗಳನ್ನು ತೆರೆದರೆ, ಸಾಕಷ್ಟು ಆಹಾರ ಇರುತ್ತದೆ!</verse>
				<verse number="14">“ಇದು ಒಳ್ಳೆಯದಲ್ಲ ಇದು ಒಳ್ಳೆಯದಲ್ಲ!” ಎಂದು ಕೊಳ್ಳುವವನು ಹೇಳುತ್ತಾನೆ; ಆದರೆ ಅವನು ಕೊಂಡು ಹೋದ ಮೇಲೆ ಅದನ್ನೇ ಹೊಗಳುತ್ತಾನೆ.</verse>
				<verse number="15">ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ; ಆದರೆ ಪರಿಜ್ಞಾನದ ತುಟಿಗಳು ಅಪರೂಪದ ರತ್ನವಾಗಿವೆ.</verse>
				<verse number="16">ಅಪರಿಚಿತನಿಗೆ ಭದ್ರತೆಯನ್ನು ನೀಡುವವನ ವಸ್ತ್ರವನ್ನು ತೆಗೆದುಕೋ; ವಿದೇಶಿಯರಿಗೆ ಇದನ್ನು ಮಾಡಿದರೆ ಅದನ್ನು ಒತ್ತೆ ಇಟ್ಟುಕೋ.</verse>
				<verse number="17">ವಂಚನೆಯಿಂದ ಸಿಕ್ಕಿದ ಆಹಾರವು ರುಚಿ; ಆದರೆ ಆಮೇಲೆ ಅವನ ಬಾಯಿಯು ಮರಳಿನಿಂದ ತುಂಬುವುದು.</verse>
				<verse number="18">ಸಲಹೆಯಿಂದ ಯೋಜನೆಗಳು ನೆರವೆರುವವು; ಜ್ಞಾನಿಯ ಸಲಹೆಯಿಲ್ಲದೆ ಯುದ್ಧಕ್ಕೆ ಹೋಗಬೇಡಿ.</verse>
				<verse number="19">ಚಾಡಿಕೋರನು ಗುಟ್ಟುಗಳನ್ನು ರಟ್ಟುಮಾಡುತ್ತಾನೆ; ಆದಕಾರಣ ಹರಟೆ ಹೊಡೆಯುವವನ ಸಹವಾಸ ಮಾಡಬೇಡ.</verse>
				<verse number="20">ತನ್ನ ತಂದೆಯನ್ನಾಗಲಿ, ತನ್ನ ತಾಯಿಯನ್ನಾಗಲಿ ಶಪಿಸುವವನ ದೀಪವು ಮಧ್ಯರಾತ್ರಿಯ ಕತ್ತಲೆಯಲ್ಲಿ ಆರಿಹೋಗುವುದು.</verse>
				<verse number="21">ಪ್ರಾರಂಭದಲ್ಲಿ ತ್ವರೆಯಾಗಿ ಪಡೆದುಕೊಂಡ ಆಸ್ತಿಯೂ ಅಂತ್ಯದಲ್ಲಿ ಆಶೀರ್ವಾದವಾಗಿರುವುದಿಲ್ಲ.</verse>
				<verse number="22">ನೀನು, “ಕೇಡಿಗೆ ಮುಯ್ಯಿತೀರಿಸುವೆನು,” ಎಂದು ಹೇಳಬೇಡ; ಯೆಹೋವ ದೇವರನ್ನು ನಿರೀಕ್ಷಿಸು; ಆಗ ಅವರೇ ನಿಮ್ಮನ್ನು ರಕ್ಷಿಸಿ ಉದ್ಧರಿಸುವನು.</verse>
				<verse number="23">ವ್ಯತ್ಯಾಸದ ತೂಕಗಳು ಯೆಹೋವ ದೇವರಿಗೆ ಅಸಹ್ಯವಾಗಿವೆ; ಅಪ್ರಾಮಾಣಿಕ ತಕ್ಕಡಿಗಳು ಅವರನ್ನು ಮೆಚ್ಚಿಸುವುದಿಲ್ಲ.</verse>
				<verse number="24">ಮನುಷ್ಯನ ಹೆಜ್ಜೆಗಳನ್ನು ಯೆಹೋವ ದೇವರು ನಿರ್ದೇಶಿಸುತ್ತಾರೆ. ಹಾಗಾದರೆ ಒಬ್ಬ ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಳ್ಳಬಲ್ಲನು?</verse>
				<verse number="25">ದುಡುಕಿ ಪ್ರತಿಷ್ಠೆಗಾಗಿ ದೇವರಿಗೆ ಹರಕೆ ಮಾಡಿಕೊಂಡು ಆಮೇಲೆ ವಿಚಾರಿಸುವುದು ಉರುಲಾಗಿದೆ.</verse>
				<verse number="26">ಜ್ಞಾನಿಯಾದ ಅರಸನು ದುಷ್ಟರನ್ನು ತೂರುವನು; ಅವರ ಮೇಲೆ ಕಣದ ಚಕ್ರವನ್ನು ಎಳೆಯುವನು.</verse>
				<verse number="27">ಮನುಷ್ಯನ ಆತ್ಮವು ಯೆಹೋವ ದೇವರ ದೀಪವಾಗಿದೆ. ಅದು ಅವನ ಅಂತರಂಗವನ್ನು ಶೋಧಿಸುತ್ತದೆ.</verse>
				<verse number="28">ಪ್ರೀತಿಯೂ ನಂಬಿಗಸ್ತಿಕೆಯೂ ಅರಸನನ್ನು ಕಾಯುತ್ತವೆ; ಪ್ರೀತಿಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.</verse>
				<verse number="29">ಯೌವನಸ್ಥರ ಮಹಿಮೆ ಅವರ ಬಲವೇ; ಮುದುಕರ ವೈಭವ ನರೆತ ತಲೆಯೇ.</verse>
				<verse number="30">ಗಾಯಗೊಳಿಸುವ ಏಟುಗಳು ದುಷ್ಟತ್ವವನ್ನು ತೊಳೆಯುತ್ತವೆ; ಪೆಟ್ಟುಗಳು ಅಂತರಂಗವನ್ನೂ ಶುದ್ಧಿಗೊಳಿಸುತ್ತವೆ.</verse>
			</chapter>
			<chapter number="21">
				<verse number="1">ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.</verse>
				<verse number="2">ಮನುಷ್ಯನ ಪ್ರತಿಯೊಂದು ಮಾರ್ಗವು ಅವನ ದೃಷ್ಟಿಯಲ್ಲಿ ಸರಿಯಾಗಿದೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರೀಕ್ಷಿಸುತ್ತಾರೆ.</verse>
				<verse number="3">ಯಜ್ಞಕ್ಕಿಂತ ನೀತಿ ನ್ಯಾಯಗಳನ್ನು ನಡೆಸುವುದು ಯೆಹೋವ ದೇವರಿಗೆ ಎಷ್ಟೋ ಮೆಚ್ಚಿಗೆಯಾಗಿದೆ.</verse>
				<verse number="4">ಹೆಮ್ಮೆಯ ದೃಷ್ಟಿ, ಗರ್ವದ ಹೃದಯ, ದುಷ್ಟರ ಉಳುವಿಕೆ ಇವೆಲ್ಲಾ ಪಾಪವೇ.</verse>
				<verse number="5">ಶ್ರದ್ಧೆಯುಳ್ಳವನ ಯೋಜನೆಗಳಿಂದ ಸಮೃದ್ಧಿ; ಆತುರತೆಯು ಬಡತನಕ್ಕೆ ನಡೆಸುತ್ತದೆ.</verse>
				<verse number="6">ಸುಳ್ಳಿನ ನಾಲಿಗೆಯಿಂದ ಸಂಪಾದಿಸಿದ ಸಂಪತ್ತು ಕ್ಷಣಿಕ ಆವಿಯಂತೆಯೂ ಮೃತ್ಯುಪಾಶದಂತೆಯೂ ಆಗಿದೆ.</verse>
				<verse number="7">ದುಷ್ಟರ ಹಿಂಸೆಯು ಅವರನ್ನು ನಾಶಪಡಿಸುವುದು; ಏಕೆಂದರೆ ನ್ಯಾಯವಾದದ್ದನ್ನು ಮಾಡುವುದನ್ನು ಅವರು ನಿರಾಕರಿಸುತ್ತಾರೆ.</verse>
				<verse number="8">ದೋಷಿಯ ಮಾರ್ಗವು ಡೊಂಕು, ಮುಗ್ಧನ ನಡತೆ ಯಥಾರ್ಥ.</verse>
				<verse number="9">ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವುದಕ್ಕಿಂತ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದು ಲೇಸು.</verse>
				<verse number="10">ದುಷ್ಟರು ಕೇಡನ್ನು ಅಪೇಕ್ಷಿಸುತ್ತಾರೆ; ಅವನು ತನ್ನ ನೆರೆಯವನಿಗೂ ಯಾವ ದಯೆಯನ್ನೂ ತೋರಿಸನು.</verse>
				<verse number="11">ಪರಿಹಾಸ್ಯಕಾರರನ್ನು ಶಿಕ್ಷಿಸಿದರೆ, ಮುಗ್ಧರು ಜ್ಞಾನವಂತರಾಗುವರು; ಜ್ಞಾನಿಯು ಶಿಕ್ಷಣ ಹೊಂದಿದರೆ, ಅವನು ಪರಿಜ್ಞಾನವನ್ನು ಹೊಂದುತ್ತಾನೆ.</verse>
				<verse number="12">ನೀತಿವಂತನು ದುಷ್ಟರ ಮನೆಯನ್ನು ಗಮನಿಸುತ್ತಾನೆ; ದುಷ್ಟರನ್ನು ಕೇಡಿಗೆ ತಳ್ಳುವನು.</verse>
				<verse number="13">ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು ತಾನೇ ಕೂಗಿದಾಗ ಯಾರೂ ಅವನಿಗೆ ಉತ್ತರ ಕೊಡುವುದಿಲ್ಲ.</verse>
				<verse number="14">ಗುಟ್ಟಾಗಿ ಕೊಡುವ ಬಹುಮಾನವು ಕೋಪವನ್ನು ಅಡಗಿಸುವುದು; ಮಡಿಲಲ್ಲಿ ಇಟ್ಟ ಲಂಚವು ಮಹಾ ಕೋಪವನ್ನು ಆರಿಸುವುದು.</verse>
				<verse number="15">ನ್ಯಾಯತೀರಿಸುವುದು ನೀತಿವಂತರಿಗೆ ಸಂತೋಷ; ಆದರೆ ಕೆಟ್ಟದ್ದನ್ನು ಮಾಡುವವರಿಗೆ ಭೀತಿ.</verse>
				<verse number="16">ವಿವೇಕದ ಹಾದಿಯಿಂದ ತಪ್ಪಿಸಿಕೊಳ್ಳುವವನು ಸತ್ತವರ ಸಹವಾಸದಲ್ಲಿ ವಿಶ್ರಾಂತಿ ಪಡೆಯುವನು.</verse>
				<verse number="17">ಭೋಗಾಸಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ, ತೈಲವನ್ನೂ ಅಪೇಕ್ಷಿಸುವವನು ಎಂದಿಗೂ ಧನವಂತನಾಗನು.</verse>
				<verse number="18">ದುಷ್ಟರು ನೀತಿವಂತರಿಗೂ, ದ್ರೋಹಿಗಳು ಸನ್ಮಾರ್ಗಿಗಳಿಗೂ ಈಡಾಗಿದ್ದಾರೆ.</verse>
				<verse number="19">ಕಾಡುವ ಜಗಳಗಂಟಿ ಹೆಂಡತಿಯೊಂದಿಗೆ ವಾಸಮಾಡುವುದಕ್ಕಿಂತ, ಮರಭೂಮಿಯಲ್ಲಿ ವಾಸಿಸುವುದು ಲೇಸು.</verse>
				<verse number="20">ಜ್ಞಾನವಂತರ ನಿವಾಸದಲ್ಲಿ ಆಯ್ದ ಐಶ್ವರ್ಯವೂ, ಎಣ್ಣೆಯೂ ಇರುತ್ತವೆ; ಆದರೆ ಬುದ್ಧಿಹೀನನು ಇದ್ದದ್ದೆಲ್ಲವನ್ನು ನುಂಗಿಬಿಡುತ್ತಾನೆ.</verse>
				<verse number="21">ನೀತಿಯನ್ನೂ, ಕರುಣೆಯನ್ನೂ ಹಿಂಬಾಲಿಸುವವನು ಜೀವವನ್ನೂ, ನೀತಿಯನ್ನೂ, ಕೀರ್ತಿಯನ್ನೂ ಕಂಡುಕೊಳ್ಳುತ್ತಾನೆ.</verse>
				<verse number="22">ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ, ಅವರು ಭರವಸವಿಟ್ಟ ಬಲವಾದ ಕೋಟೆಯನ್ನು ಕೆಡವಿ ಹಾಕುತ್ತಾನೆ.</verse>
				<verse number="23">ತನ್ನ ಬಾಯಿಯನ್ನೂ, ನಾಲಿಗೆಯನ್ನೂ ಕಾಯುವವನು, ಇಕ್ಕಟ್ಟುಗಳಿಂದ ತನ್ನ ಪ್ರಾಣವನ್ನು ಕಾಪಾಡಿಕೊಳ್ಳುತ್ತಾನೆ.</verse>
				<verse number="24">ಸೊಕ್ಕೇರಿ ಗರ್ವದಲ್ಲಿ ವರ್ತಿಸುವವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕ.</verse>
				<verse number="25">ಸೋಮಾರಿಯ ಆಸೆಯು ಅವನನ್ನು ಕೊಲ್ಲುತ್ತದೆ; ಅವನ ಕೈಗಳು ದುಡಿಯುವುದಕ್ಕೆ ನಿರಾಕರಿಸುತ್ತವೆ.</verse>
				<verse number="26">ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ; ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ.</verse>
				<verse number="27">ದುಷ್ಟರ ಯಜ್ಞವು ಅಸಹ್ಯ; ಅದನ್ನು ದುರ್ಬುದ್ಧಿಯಿಂದ ಅರ್ಪಿಸಿದರೆ, ಇನ್ನೂ ಎಷ್ಟೋ ಅಸಹ್ಯಕರ.</verse>
				<verse number="28">ಸುಳ್ಳುಸಾಕ್ಷಿಯವನು ನಾಶವಾಗುವನು; ಆದರೆ ಕೇಳಿದ್ದನ್ನೇ ನುಡಿಯುವವನ ಸಾಕ್ಷಿ ಸದಾ ನಿಲ್ಲುವುದು.</verse>
				<verse number="29">ದುಷ್ಟನು ತನ್ನ ಮುಖವನ್ನು ಕಠಿಣ ಮಾಡಿಕೊಳ್ಳುತ್ತಾನೆ; ಯಥಾರ್ಥವಂತನಾದರೋ ತನ್ನ ಮಾರ್ಗಗಳನ್ನು ಯೋಚಿಸುತ್ತಾರೆ.</verse>
				<verse number="30">ಯೆಹೋವ ದೇವರಿಗೆ ವಿರೋಧವಾಗಿ ಯಾವ ಜ್ಞಾನವೂ, ವಿವೇಕವೂ, ಯೋಜನೆಯೂ ಇಲ್ಲ.</verse>
				<verse number="31">ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಆದರೆ ಜಯ ದೊರೆಯುವುದು ಯೆಹೋವ ದೇವರಿಂದಲೇ.</verse>
			</chapter>
			<chapter number="22">
				<verse number="1">ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ; ಬೆಳ್ಳಿಬಂಗಾರಕ್ಕಿಂತಲೂ ಗೌರವದಿಂದಿರುವುದು ಉತ್ತಮ.</verse>
				<verse number="2">ಧನಿಕರು, ಬಡವರು ಇದನ್ನು ಸಾಮಾನ್ಯವಾಗಿ ಹೊಂದಿರುವರು: ಇವರೆಲ್ಲರನ್ನು ಸೃಷ್ಟಿಸಿದಾತ ಯೆಹೋವ ದೇವರೇ.</verse>
				<verse number="3">ಜಾಣನು ಕೇಡನ್ನು ಮುಂದಾಗಿ ಕಂಡು ತಾನು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾನೆ.</verse>
				<verse number="4">ಯೆಹೋವ ದೇವರ ಭಯವೂ ದೀನತೆಯೂ ಕೊಡುವ ಪ್ರತಿಫಲ, ಐಶ್ವರ್ಯವೂ ಮಾನವೂ ಜೀವವೂ ಆಗಿದೆ.</verse>
				<verse number="5">ದುಷ್ಟರ ದಾರಿಯಲ್ಲಿ ಮುಳ್ಳುಗಳೂ, ಉರುಲುಗಳೂ ಇವೆ; ತನ್ನ ಜೀವವನ್ನು ಕಾಪಾಡಿಕೊಳ್ಳುವವನು ಅವುಗಳಿಂದ ದೂರವಾಗಿರುವನು.</verse>
				<verse number="6">ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳಿಗೆ ಶಿಕ್ಷಣವನ್ನು ಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದರಿಂದ ದೂರ ಹೋಗುವುದಿಲ್ಲ.</verse>
				<verse number="7">ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ; ಸಾಲಗಾರನು ಸಾಲಕೊಟ್ಟವನಿಗೆ ಗುಲಾಮನು.</verse>
				<verse number="8">ಕೆಟ್ಟತನವನ್ನು ಬಿತ್ತುವವನು ಕೇಡನ್ನು ಕೊಯ್ಯುವನು; ಅವನ ಕೋಪದ ಬೆತ್ತವು ಮುರಿದು ಹೋಗುವುದು.</verse>
				<verse number="9">ಉದಾರವಾಗಿ ಕೊಡುವವನು ಆಶೀರ್ವಾದವನ್ನು ಹೊಂದುವನು, ಏಕೆಂದರೆ ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.</verse>
				<verse number="10">ಪರಿಹಾಸ್ಯ ಮಾಡುವವನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವುದು; ವಿವಾದವೂ ನಿಂದೆಯೂ ನಿಂತುಹೋಗುವುವು.</verse>
				<verse number="11">ಶುದ್ಧ ಹೃದಯವನ್ನು ಪ್ರೀತಿಸಿ, ಕೃಪೆಯಿಂದ ಮಾತನಾಡುವವನಿಗೆ ಅರಸನು ಸ್ನೇಹಿತನಾಗಿರುವನು.</verse>
				<verse number="12">ಯೆಹೋವ ದೇವರ ಕಣ್ಣುಗಳು ತಿಳುವಳಿಕೆಯನ್ನು ಕಾಯುತ್ತವೆ; ಅವರು ದ್ರೋಹಿಯ ಮಾತುಗಳನ್ನು ಕೆಡವಿ ಹಾಕುತ್ತಾರೆ.</verse>
				<verse number="13">ಸೋಮಾರಿಯು, “ಹೊರಗೆ ಸಿಂಹವಿದೆ! ಅದು ನನ್ನನ್ನು ಬೀದಿಗಳಲ್ಲಿ ಕೊಂದುಹಾಕುತ್ತದೆ,” ಎಂದು ಹೇಳುತ್ತಾನೆ.</verse>
				<verse number="14">ವ್ಯಭಿಚಾರಿಣಿಯ ಬಾಯಿ ಆಳವಾದ ಬಾವಿ; ಯೆಹೋವ ದೇವರಿಗೆ ಸಿಟ್ಟನ್ನು ಎಬ್ಬಿಸುವವನು ಅದರಲ್ಲಿ ಬೀಳುವನು.</verse>
				<verse number="15">ಮೂರ್ಖತನ ಯುವಕನ ಹೃದಯದಲ್ಲಿ ಬಂಧಿಸಲಾಗಿದೆ; ಆದರೆ ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವುದು.</verse>
				<verse number="16">ತನ್ನ ಸಂಪತ್ತನ್ನು ವೃದ್ಧಿಗೊಳಿಸುವುದಕ್ಕೆ ಬಡವರನ್ನು ಹಿಂಸಿಸುವವನೂ ಐಶ್ವರ್ಯವಂತರಿಗೆ ದಾನ ಕೊಡುವವನೂ ನಿಶ್ಚಯವಾಗಿ ಕೊರತೆಪಡುವನು.</verse>
				<verse number="17">ಜ್ಞಾನಿಗಳ ಮಾತುಗಳನ್ನು ಕಿವಿಗೊಟ್ಟು ಕೇಳು; ನನ್ನ ಬೋಧನೆಯನ್ನು ನಿನ್ನ ಹೃದಯವು ಅನ್ವಯಿಸಲಿ.</verse>
				<verse number="18">ಏಕೆಂದರೆ ಅವುಗಳನ್ನು ನಿನ್ನ ಹೃದಯದಲ್ಲಿ ಇಟ್ಟು ಕಾಪಾಡು, ಅವು ನಿನ್ನ ತುಟಿಗಳ ಮೇಲೆ ಸಿದ್ಧವಿದ್ದರೆ ಮೆಚ್ಚುಗೆಯಾಗಿವೆ.</verse>
				<verse number="19">ನಿನ್ನ ಭರವಸೆಯು ಯೆಹೋವ ದೇವರಲ್ಲಿ ಇರುವಂತೆ ಈ ದಿವಸ ನಿನಗೇ ತಿಳಿಯಪಡಿಸಿದ್ದೇನೆ.</verse>
				<verse number="20">ನಾನು ನಿಮಗಾಗಿ ಮೂವತ್ತು ಹೇಳಿಕೆಗಳನ್ನು ಬರೆದಿಲ್ಲವೋ? ಸಲಹೆ ಮತ್ತು ಪರಿಜ್ಞಾನದ ಹೇಳಿಕೆಗಳು,</verse>
				<verse number="21">ಪ್ರಾಮಾಣಿಕವಾಗಿರಲು ಮತ್ತು ಸತ್ಯವನ್ನು ಮಾತನಾಡಲು ನಿಮಗೆ ಕಲಿಸುವುದು, ಆದ್ದರಿಂದ ನೀವು ಸೇವೆ ಸಲ್ಲಿಸುವವರಿಗೆ ಸತ್ಯವಾದ ವರದಿಗಳನ್ನು ಹಿಂತಿರುಗಿಸುವಂತೆ ನಾನು ನಿಮಗೆ ಬರೆದಿದ್ದೇನೆ.</verse>
				<verse number="22">ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆಮಾಡಬೇಡ; ನ್ಯಾಯಾಲಯದಲ್ಲಿ ದರಿದ್ರರನ್ನು ತುಳಿಯಬೇಡ.</verse>
				<verse number="23">ಏಕೆಂದರೆ ಯೆಹೋವ ದೇವರು ಅವರ ವ್ಯಾಜ್ಯವನ್ನು ನಡೆಸಿ, ಸೂರೆ ಮಾಡಿದವರ ಪ್ರಾಣವನ್ನು ಸೂರೆ ಮಾಡುವರು.</verse>
				<verse number="24">ಮುಂಗೊಪಿಯೊಂದಿಗೆ ಸ್ನೇಹ ಬೆಳೆಸಬೇಡ; ಸುಲಭವಾಗಿ ಕೋಪಗೊಳ್ಳುವವರೊಂದಿಗೆ ಸಹವಾಸ ಮಾಡಬೇಡ;</verse>
				<verse number="25">ಹಾಗೆ ಮಾಡಿದರೆ ನೀನು ಅವನ ನಡತೆಗಳನ್ನು ಕಲಿತು, ನಿನ್ನನ್ನೇ ಉರುಲಿಗೆ ಸಿಕ್ಕಿಸಿಕೊಳ್ಳುವೆ.</verse>
				<verse number="26">ಬೇರೆಯವರ ಸಾಲವನ್ನು ಖಾತರಿಪಡಿಸಲೂ ಬೇರೊಬ್ಬರಿಗೆ ಭದ್ರತೆಯನ್ನು ನೀಡಲು ಒಪ್ಪಬೇಡ.</verse>
				<verse number="27">ಸಾಲ ತೀರಿಸಲು ನಿನಗೆ ಏನೂ ಇಲ್ಲದೆ ಹೋದರೆ ನಿನ್ನ ಕೆಳಗಿನ ಹಾಸಿಗೆಯನ್ನು ಅವನು ತೆಗೆದುಕೊಂಡು ಹೋಗುವನಲ್ಲವೇ?</verse>
				<verse number="28">ನಿನ್ನ ಪಿತೃಗಳು ಹಾಕಿದ ಪೂರ್ವಕಾಲದ ಮೇರೆಯನ್ನು ತೆಗೆಯಬೇಡ.</verse>
				<verse number="29">ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿದ್ದೀಯಾ? ಅವನು ನೀಚರ ಮುಂದೆ ಅಲ್ಲ, ಅರಸರ ಮುಂದೆಯೇ ಸೇವೆ ಸಲ್ಲಿಸುವನು.</verse>
			</chapter>
			<chapter number="23">
				<verse number="1">ಆಳುವವನ ಸಂಗಡ ನೀನು ಊಟಕ್ಕೆ ಕುಳಿತಿರುವಾಗ, ನಿನ್ನ ಎದುರಿನಲ್ಲಿ ಏನಿದೆ ಎಂದು ಶ್ರದ್ಧೆಯಿಂದ ಗಮನಿಸು.</verse>
				<verse number="2">ನೀನು ಹೊಟ್ಟೆಬಾಕನಾಗಿದ್ದರೆ, ನಿನ್ನ ಕುತ್ತಿಗೆಗೆ ಖಡ್ಗವನ್ನು ಇಟ್ಟುಕೋ.</verse>
				<verse number="3">ಅವನ ರುಚಿ ಪದಾರ್ಥಗಳನ್ನು ಅಪೇಕ್ಷಿಸಬೇಡ; ಏಕೆಂದರೆ ಅದು ಮೋಸದ ಆಹಾರವು.</verse>
				<verse number="4">ಐಶ್ವರ್ಯವಂತನಾಗುವುದಕ್ಕೆ ಪ್ರಯಾಸಪಡಬೇಡ; ಅದಕ್ಕಾಗಿ ಸ್ವಬುದ್ಧಿಯನ್ನೇ ಆಶ್ರಯಿಸಬೇಡ.</verse>
				<verse number="5">ಕಣ್ಣು ಮಿಟುಕಿಸುವುದರಲ್ಲಿ ಐಶ್ವರ್ಯ ಕಣ್ಮರೆಯಾಗುತ್ತದೆ. ಅದು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುವುದು.</verse>
				<verse number="6">ಜಿಪುಣನ ಆಹಾರವನ್ನು ತಿನ್ನಬೇಡ; ಅವನ ರುಚಿ ಪದಾರ್ಥಗಳನ್ನು ಆಶಿಸಬೇಡ.</verse>
				<verse number="7">ಏಕೆಂದರೆ, ಅವನು ಎಲ್ಲದಕ್ಕೂ ಬೆಲೆ ಕಟ್ಟುವ ಯೋಚನೆಯುಳ್ಳವನಂತೆ ಇದ್ದಾನೆ; ಅವನು, “ತಿನ್ನು, ಕುಡಿ,” ಎಂದು ಹೇಳುತ್ತಾನೆ; ಆದರೆ ಅವನ ಹೃದಯವು ನಿನ್ನೊಂದಿಗಿಲ್ಲ.</verse>
				<verse number="8">ನೀನು ತಿಂದ ಸ್ವಲ್ಪ ತುತ್ತನ್ನು ಕಕ್ಕಿಬಿಡುವೆ; ನಿನ್ನ ಸವಿಮಾತುಗಳೆಲ್ಲಾ ವ್ಯರ್ಥವೇ.</verse>
				<verse number="9">ಬುದ್ಧಿಹೀನರ ಸಂಗಡ ಮಾತಾಡಬೇಡ; ಏಕೆಂದರೆ ನಿನ್ನ ಜ್ಞಾನದ ಮಾತುಗಳನ್ನು ಅವರು ತಿರಸ್ಕರಿಸುವನು.</verse>
				<verse number="10">ಪೂರ್ವಕಾಲದ ಮೇರೆಯನ್ನು ತೆಗೆಯಬೇಡ; ಅನಾಥರ ಹೊಲಗಳನ್ನು ಅತಿಕ್ರಮಿಸಬೇಡ.</verse>
				<verse number="11">ಏಕೆಂದರೆ ಅವನ ವಿಮೋಚಕನು ಬಲಶಾಲಿಯಾಗಿದ್ದಾನೆ; ಅವರ ವ್ಯಾಜ್ಯಕ್ಕಾಗಿ ಆತನು ವಾದಿಸುವನು.</verse>
				<verse number="12">ಶಿಸ್ತಿಗೆ ನಿನ್ನ ಹೃದಯವನ್ನೂ ತಿಳುವಳಿಕೆಯ ಮಾತುಗಳಿಗೆ ನಿನ್ನ ಕಿವಿಗಳನ್ನೂ ಕೊಡು.</verse>
				<verse number="13">ಮಕ್ಕಳನ್ನು ಶಿಕ್ಷಿಸಲು ಹಿಂದೆಗೆಯಬೇಡ; ಬೆತ್ತದಿಂದ ಹೊಡೆದರೆ, ಅವರು ಸಾಯುವುದಿಲ್ಲ.</verse>
				<verse number="14">ಅವರನ್ನು ಬೆತ್ತದಿಂದ ಹೊಡೆದು, ಪಾತಾಳದಿಂದ ಅವರ ಮರಣವನ್ನು ತಪ್ಪಿಸುವೆ.</verse>
				<verse number="15">ಮಗನೇ, ನಿನ್ನ ಹೃದಯವು ಜ್ಞಾನವುಳ್ಳದ್ದಾಗಿದ್ದರೆ, ನನ್ನ ಹೃದಯವು ಹರ್ಷಿಸುವುದು.</verse>
				<verse number="16">ನಿನ್ನ ತುಟಿಗಳು ಯಥಾರ್ಥವಾದವುಗಳನ್ನು ಮಾತಾಡಿದರೆ, ನನ್ನ ಅಂತರಾತ್ಮವು ಸಂತೋಷಿಸುವುದು.</verse>
				<verse number="17">ಪಾಪಿಗಳನ್ನು ನೋಡಿ ನಿನ್ನ ಹೃದಯವು ಅಸೂಯೆಪಡದಿರಲಿ; ಆದರೆ ಯೆಹೋವ ದೇವರ ಭಯದಲ್ಲಿರಲು ಯಾವಾಗಲೂ ಆಸಕ್ತನಾಗಿರು.</verse>
				<verse number="18">ಖಂಡಿತವಾಗಿಯೂ ನಿನಗೆ ಮುಂದಿನ ನಿರೀಕ್ಷೆಯಿದೆ; ನಿನ್ನ ನಿರೀಕ್ಷೆಯು ನಿರರ್ಥಕವಾಗದು.</verse>
				<verse number="19">ಮಗನೇ, ಕೇಳಿ ಜ್ಞಾನವಂತನಾಗು; ನೀತಿ ಮಾರ್ಗದಲ್ಲಿ ನಿನ್ನ ಹೃದಯವನ್ನು ನಡೆಸು.</verse>
				<verse number="20">ಅತಿ ಮದ್ಯಪಾನ ಮಾಡುವವರಲ್ಲಿ ಅತಿ ಮಾಂಸಭಕ್ಷರಲ್ಲಿಯೂ ಸೇರಬೇಡ.</verse>
				<verse number="21">ಏಕೆಂದರೆ ಕುಡುಕರೂ ಹೊಟ್ಟೆಬಾಕರೂ ದುರ್ಗತಿಗೆ ಬರುವರು; ತೂಕಡಿಕೆಯು ಹರಕು ಬಟ್ಟೆಗಳನ್ನು ಹೊದಿಸುವದು.</verse>
				<verse number="22">ನಿನ್ನನ್ನು ಹೆತ್ತ ತಂದೆಯ ಮಾತಿಗೆ ಕಿವಿಗೊಡು, ನಿನ್ನ ತಾಯಿ ಮುಪ್ಪಿನವಳಾದಾಗ ಆಕೆಯನ್ನು ಅಸಡ್ಡೆ ಮಾಡಬೇಡ.</verse>
				<verse number="23">ಸತ್ಯವನ್ನೂ ಜ್ಞಾನವನ್ನೂ ಶಿಕ್ಷಣವನ್ನೂ ವಿವೇಕವನ್ನೂ ಕೊಂಡುಕೋ; ಆದರೆ ಅವುಗಳನ್ನು ಮಾರಬೇಡ.</verse>
				<verse number="24">ನೀತಿವಂತನ ತಂದೆಯು ಬಹಳವಾಗಿ ಸಂತೋಷಪಡುವನು; ಜ್ಞಾನಿಯಾದ ಮಗುವನ್ನು ಪಡೆದವನಿಗೆ ಅವನಿಂದ ಆನಂದವಾಗುವುದು.</verse>
				<verse number="25">ನಿನ್ನ ತಂದೆತಾಯಿಗಳು ಸಂತೋಷಿಸುವರು; ನಿನ್ನ ಹೆತ್ತ ತಾಯಿ ಆನಂದಿಸುವಳು.</verse>
				<verse number="26">ಮಗನೇ, ನಿನ್ನ ಮನಸ್ಸನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ಅನುಸರಿಸುವಲ್ಲಿ ನಿಮ್ಮ ಕಣ್ಣುಗಳು ಆನಂದಿಸಲಿ.</verse>
				<verse number="27">ವೇಶ್ಯೆಯು ಆಳವಾದ ಕುಣಿ; ವ್ಯಭಿಚಾರಿಣಿಯು ಇಕ್ಕಟ್ಟಾದ ಗುಂಡಿ.</verse>
				<verse number="28">ಕಳ್ಳನಂತೆ ಅವಳು ಹೊಂಚು ಹಾಕಿ ಮನುಷ್ಯರಲ್ಲಿ ದ್ರೋಹಿಗಳನ್ನು ಹೆಚ್ಚಿಸುತ್ತಾಳೆ.</verse>
				<verse number="29">ಯಾರಿಗೆ ಕಷ್ಟ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೊಣಗುಟ್ಟುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಯಾರಿಗೆ ಕೆಂಪೇರಿದ ಕಣ್ಣುಗಳು?</verse>
				<verse number="30">ಮದ್ಯಪಾನದಲ್ಲಿ ಆಸಕ್ತರಾಗಿ, ಮಿಶ್ರ ಮದ್ಯಪಾನವನ್ನು ಕುಡಿಯ ಬಯಸುವವರೇ ಅಲ್ಲವೇ!</verse>
				<verse number="31">ದ್ರಾಕ್ಷಾರಸವು ಕೆಂಪಾಗಿದ್ದು, ಪಾತ್ರೆಯಲ್ಲಿ ಥಳಥಳಿಸುತ್ತಾ ಚಲಿಸಿದರೆ, ಅದನ್ನು ನೋಡಬೇಡ.</verse>
				<verse number="32">ಕೊನೆಗೆ ಅದು ಹಾವಿನಂತೆ ಕಚ್ಚುವುದು ಮತ್ತು ಸರ್ಪದಂತೆ ವಿಷವುಕ್ಕಿಸುವುದು.</verse>
				<verse number="33">ನಿಮ್ಮ ಕಣ್ಣುಗಳು ವಿಚಿತ್ರ ದೃಶ್ಯಗಳನ್ನು ನೋಡುತ್ತವೆ. ನಿಮ್ಮ ಮನಸ್ಸು ಗೊಂದಲಮಯ ವಿಷಯಗಳನ್ನು ಕಲ್ಪಿಸುತ್ತದೆ.</verse>
				<verse number="34">ನೀನು ಸಮುದ್ರದ ಮಧ್ಯದಲ್ಲಿ ಮಲಗಿರುವವನಂತೆ ಇಲ್ಲವೆ ಹಡಗಿನ ಕಂಬದ ತುದಿಯಲ್ಲಿ ಇರುವಿ.</verse>
				<verse number="35">“ಜನರು ನನ್ನನ್ನು ಹೊಡೆದರೂ ನನಗೆ ನೋವಾಗಲಿಲ್ಲ; ನಾನು ಎಚ್ಚರವಾಗುವುದು ಯಾವಾಗ? ಪುನಃ ನಾನು ಅದನ್ನು ಕುಡಿದೇನು?” ಎಂದುಕೊಳ್ಳುವೆ.</verse>
			</chapter>
			<chapter number="24">
				<verse number="1">ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆ ಪಡದಿರು; ಇಲ್ಲವೆ ಅವರ ಸಂಗಡ ಇರುವುದಕ್ಕೆ ಅಪೇಕ್ಷಿಸಬೇಡ.</verse>
				<verse number="2">ಏಕೆಂದರೆ ಅವರ ಹೃದಯವು ಹಿಂಸೆಯನ್ನು ಯೋಜಿಸುತ್ತದೆ; ಅವರ ತುಟಿಗಳು ಹಾನಿಯನ್ನು ಪ್ರಸ್ತಾಪಿಸುತ್ತವೆ.</verse>
				<verse number="3">ಜ್ಞಾನದಿಂದ ಮನೆಯು ಕಟ್ಟಲಾಗುತ್ತದೆ. ತಿಳುವಳಿಕೆಯಿಂದ ಅದು ಸ್ಥಿರಗೊಳ್ಳುತ್ತದೆ.</verse>
				<verse number="4">ತಿಳುವಳಿಕೆಯಿಂದ ಅದರ ಕೋಣೆಗಳು ಅಮೂಲ್ಯವಾದ ಎಲ್ಲಾ ಇಷ್ಟ ಸಂಪತ್ತಿನಿಂದ ತುಂಬುವುದು.</verse>
				<verse number="5">ಬಲವುಳ್ಳವನಿಗಿಂತ ಜ್ಞಾನಿಯು ಶಕ್ತಿಶಾಲಿ; ತಿಳುವಳಿಕೆಯುಳ್ಳವನು ಬಲವನ್ನು ಹೆಚ್ಚಿಸಿಕೊಳ್ಳುತ್ತಾನೆ.</verse>
				<verse number="6">ಖಂಡಿತವಾಗಿಯೂ ನಿಮಗೆ ಯುದ್ಧಮಾಡಲು ಮಾರ್ಗದರ್ಶನ ಬೇಕು, ಬಹುಮಂದಿ ಸಲಹೆಗಾರರು ಇರುವಲ್ಲಿ ಜಯವಿರುವುದು.</verse>
				<verse number="7">ಜ್ಞಾನವು ಬುದ್ಧಿಹೀನನಿಗೆ ನಿಲುಕದು; ಪುರದ್ವಾರದಲ್ಲಿ ಕೂಡಿಬಂದ ಸಭೆಯಲ್ಲಿ ಅವನು ತನ್ನ ಬಾಯಿಯನ್ನು ತೆರೆಯುವುದೇ ಇಲ್ಲ.</verse>
				<verse number="8">ಕೇಡನ್ನು ಕಲ್ಪಿಸುವವನು ಕುಚೋದ್ಯಗಾರನೆಂದು ಕರೆಯಲ್ಪಡುವನು.</verse>
				<verse number="9">ಬುದ್ಧಿಹೀನನ ಆಲೋಚನೆಯು ಪಾಪಮಯ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ.</verse>
				<verse number="10">ಇಕ್ಕಟ್ಟಿನ ಸಮಯದಲ್ಲಿ ನೀನು ಬಳಲಿ ಹೋದರೆ, ನಿನ್ನ ಬಲವು ಕೊಂಚವಾಗಿದೆ.</verse>
				<verse number="11">ಅನ್ಯಾಯವಾಗಿ ಮರಣಕ್ಕೆ ಸಾಗಿಸುವನನ್ನು ಬಿಡಿಸುವುದಕ್ಕೆ ಯತ್ನಿಸು; ಕೊಲೆಗೆ ನೇಮಿತವಾದವರನ್ನು ನೀನು ರಕ್ಷಿಸು.</verse>
				<verse number="12">ನೀನು, “ಅದು ನನಗೆ ಏನೂ ಗೊತ್ತಿಲ್ಲ” ಎಂದು ಹೇಳಿದರೆ, ಹೃದಯವನ್ನು ಪರಿಶೋಧಿಸುವ ದೇವರು ಅದನ್ನು ತಿಳಿಯುವದಿಲ್ಲವೋ? ನಿನ್ನ ಜೀವವನ್ನು ಕಾಯುವಾತನು ಅದನ್ನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?</verse>
				<verse number="13">ಮಗನೇ, ಜೇನನ್ನು ತಿನ್ನು, ಅದು ಚೆನ್ನಾಗಿದೆ; ಜೇನು ಗೂಡಿನ ಜೇನುತುಪ್ಪವು ನಿನ್ನ ಬಾಯಿಗೆ ಸಿಹಿಯಾಗಿದೆ.</verse>
				<verse number="14">ಅಂತೆಯೇ ಜ್ಞಾನವು ನಿನಗೆ ಜೇನುತುಪ್ಪದಂತೆ ತಿಳಿದುಕೋ. ಅದು ಸಿಕ್ಕಿದಾಗ ನಿನಗೆ ಉಜ್ವಲ ಭವಿಷ್ಯವಿದೆ. ನಿನ್ನ ನಿರೀಕ್ಷೆಯು ನಿರರ್ಥಕವಾಗುವುದಿಲ್ಲ.</verse>
				<verse number="15">ದುಷ್ಟನೇ, ನೀತಿವಂತನ ನಿವಾಸಕ್ಕೆ ಹೊಂಚು ಹಾಕಬೇಡ; ಅವನ ವಿಶ್ರಾಂತಿಯ ಸ್ಥಳವನ್ನು ಸೂರೆಮಾಡಬೇಡ.</verse>
				<verse number="16">ಏಕೆಂದರೆ ನೀತಿವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡು ಬಂದಾಗ ಬೀಳುವನು.</verse>
				<verse number="17">ನಿನ್ನ ಶತ್ರು ಬಿದ್ದರೆ ಆನಂದಿಸಬೇಡ; ಅವನು ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ.</verse>
				<verse number="18">ಯೆಹೋವ ದೇವರು ಅದನ್ನು ಕಂಡು, ಅದು ಅವರಿಗೆ ಇಷ್ಟವಿಲ್ಲದ್ದರಿಂದ, ಅವರು ಅವನ ಕಡೆಯಿಂದ ತನ್ನ ಕೋಪವನ್ನು ತಿರುಗಿಸಿಬಿಟ್ಟಾರು.</verse>
				<verse number="19">ಕೆಟ್ಟವರನ್ನು ಕಂಡು ಉರಿಗೊಳ್ಳಬೇಡ; ಇಲ್ಲವೆ ದುಷ್ಟರನ್ನು ಕಂಡು ಅಸೂಯೆಪಡಬೇಡ.</verse>
				<verse number="20">ಏಕೆಂದರೆ ಕೆಡುಕನಿಗೆ ಭವಿಷ್ಯದ ನಿರೀಕ್ಷೆ ಇರುವುದಿಲ್ಲ; ದುಷ್ಟರ ದೀಪವು ಆರಿಹೋಗುವುದು.</verse>
				<verse number="21">ಮಗನೇ, ಯೆಹೋವ ದೇವರಿಗೂ, ಅರಸನಿಗೂ ಭಯಪಡು; ತಿರುಗಿಬೀಳುವವರ ಸಹವಾಸ ಮಾಡಬೇಡ,</verse>
				<verse number="22">ಏಕೆಂದರೆ ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸುವದು; ಅವರು ಯಾವ ವಿಪತ್ತುಗಳನ್ನು ತರಬಹುದು ಎಂದು ಯಾರಿಗೆ ತಿಳಿದಿದೆ?</verse>
				<verse number="23">ಇವು ಜ್ಞಾನಿಗಳ ಹೇಳಿಕೆಗಳಾಗಿವೆ: ನ್ಯಾಯ ವಿಚಾರಣೆಯಲ್ಲಿ ಪಕ್ಷಪಾತವು ಸರಿಯಲ್ಲ.</verse>
				<verse number="24">ಯಾವನು ದುಷ್ಟನಿಗೆ, “ನೀನು ನೀತಿವಂತನು” ಎಂದು ಹೇಳುತ್ತಾನೋ ಅವನನ್ನು ಜನರು ಶಪಿಸುವರು; ಜನಾಂಗಗಳು ಅವನನ್ನು ದೂಷಿಸುವರು.</verse>
				<verse number="25">ಆದರೆ ತಪ್ಪುಮಾಡಿದವರನ್ನು ತಿದ್ದುವವರಿಗೆ ಶುಭವಾಗುವುದು; ಅವರ ಮೇಲೆ ಒಳ್ಳೆಯ ಆಶೀರ್ವಾದವು ಬರುವುದು.</verse>
				<verse number="26">ಪ್ರಾಮಾಣಿಕವಾದ ಉತ್ತರವು ತುಟಿಗೆ ಮುದ್ದಿಟ್ಟಂತೆ.</verse>
				<verse number="27">ನಿನ್ನ ಹೊರಗಿನ ಕೆಲಸವನ್ನು ಕ್ರಮವಾಗಿ ಇರಿಸು. ನಿನ್ನ ಹೊಲಗಳನ್ನು ಸಿದ್ಧಪಡಿಸು; ತರುವಾಯ ನಿನ್ನ ಮನೆಯನ್ನು ಕಟ್ಟಿಕೋ.</verse>
				<verse number="28">ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ನಿನ್ನ ಮಾತುಗಳಿಂದ ಅವನಿಗೆ ಮೋಸ ಮಾಡಬೇಡ.</verse>
				<verse number="29">ನನಗೆ, “ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು; ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆನು,” ಎಂದು ಹೇಳಬೇಡ.</verse>
				<verse number="30">ನಾನು ಸೋಮಾರಿಯ ಹೊಲದ ಪಕ್ಕದಲ್ಲಿ ಬುದ್ಧಿಹೀನನ ದ್ರಾಕ್ಷಿತೋಟದ ಕಡೆಯಲ್ಲಿ ಹಾದು ಹೋದೆನು.</verse>
				<verse number="31">ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು ಕಳೆಗಳು ಅವುಗಳನ್ನು ಮುಚ್ಚಿ ಅದರ ಕಲ್ಲಿನ ಗೋಡೆಯು ಬಿದ್ದುಹೋಗಿತ್ತು.</verse>
				<verse number="32">ಆಗ ನಾನು ಅದನ್ನು ನೋಡಿ ಚಿಂತಿಸತೊಡಗಿದೆ; ನಾನು ಕಂಡದ್ದರಿಂದ ಪಾಠ ಕಲಿತೆನು.</verse>
				<verse number="33">ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ, ಇನ್ನು ಸ್ವಲ್ಪ ವಿಶ್ರಾಂತಿಗಾಗಿ ಕೈ ಮುದುರಿಕೊಳ್ಳುವೆ ಎನ್ನುವೆಯಾ?</verse>
				<verse number="34">ಹೀಗೆ ನಿನಗೆ ಬಡತನವು ಕಳ್ಳನಂತೆಯೂ ಕೊರತೆಯು ಶಸ್ತ್ರಧಾರಿಯಂತೆಯೂ ನಿನ್ನ ಮೇಲೆ ಬರುವುವು.</verse>
			</chapter>
			<chapter number="25">
				<verse number="1">ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಬರೆದಿರುವ ಇವು ಕೂಡ ಸೊಲೊಮೋನನ ಜ್ಞಾನೋಕ್ತಿಗಳೇ.</verse>
				<verse number="2">ವಿಷಯವನ್ನು ರಹಸ್ಯ ಮಾಡುವುದು ದೇವರ ಮಹಿಮೆ. ಒಂದು ವಿಷಯವನ್ನು ಹುಡುಕುವುದು ರಾಜರ ಮಹಿಮೆ.</verse>
				<verse number="3">ಆಕಾಶದ ಎತ್ತರವನ್ನು, ಭೂಮಿಯ ಆಳವನ್ನು ಯಾರೂ ಗ್ರಹಿಸಲು ಸಾಧ್ಯವಿಲ್ಲ. ಹಾಗೆಯೇ ಅರಸರ ಹೃದಯವು ಅಗೋಚರ.</verse>
				<verse number="4">ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ, ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯು ರೂಪಗೊಳ್ಳುವುದು.</verse>
				<verse number="5">ಅರಸನ ಸನ್ನಿಧಾನದಿಂದ ದುಷ್ಟರನ್ನು ತೆಗೆದುಹಾಕಿದರೆ, ಆಗ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವುದು.</verse>
				<verse number="6">ಅರಸನ ಸನ್ನಿಧಿಯಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ದೊಡ್ಡವರಿಗೆ ಏರ್ಪಡಿಸಿದ ಸ್ಥಾನವನ್ನು ಕೇಳಬೇಡ.</verse>
				<verse number="7">ಘನವಂತರ ಸನ್ನಿಧಿಯಲ್ಲಿ ನಿನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ, “ಮೇಲಕ್ಕೆ ಬಾ,” ಎಂದು ಅರಸನು ನಿನಗೆ ಹೇಳುವುದು ಲೇಸು. ನೀವು ಏನನ್ನೋ ಕಂಡಿದ್ದರಿಂದ,</verse>
				<verse number="8">ದುಡುಕಿ ವ್ಯಾಜ್ಯಮಾಡುವುದಕ್ಕಾಗಿ ಹೋಗಬೇಡ. ಏಕೆಂದರೆ ನಿನ್ನ ನೆರೆಯವನು ನಿನ್ನನ್ನು ಅವಮಾನ ಮಾಡಿದಾಗ, ನೀನು ಕಡೆಯಲ್ಲಿ ಏನು ಮಾಡುವೆ?</verse>
				<verse number="9">ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; ಇನ್ನೊಬ್ಬರ ಗುಟ್ಟನ್ನು ಬಹಿರಂಗಪಡಿಸಬೇಡ,</verse>
				<verse number="10">ಅದನ್ನು ಕೇಳುವವನು ನಿನ್ನನ್ನು ಅವಮಾನಕ್ಕೆ ಗುರಿಪಡಿಸಿಯಾನು; ನಿನ್ನ ಅಪಕೀರ್ತಿಯು ಹೋಗದೆ ಇದ್ದೀತು.</verse>
				<verse number="11">ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.</verse>
				<verse number="12">ಕೇಳುವ ಕಿವಿಗೆ ಜ್ಞಾನಿಯ ತಿದ್ದುವಿಕೆಯು ಬಂಗಾರದ ಮುರು; ಚೊಕ್ಕ ಬಂಗಾರದ ಆಭರಣ.</verse>
				<verse number="13">ಸುಗ್ಗಿಯ ಕಾಲದಲ್ಲಿ ಹಿಮದ ಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ತನಾದ ಸೇವಕನಿದ್ದಾನೆ; ಏಕೆಂದರೆ ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.</verse>
				<verse number="14">ದಾನ ಕೊಡದೆ ಕೊಟ್ಟಿದ್ದೇನೆಂದು ಹೊಗಳಿಕೊಳ್ಳುವವನು, ಮಳೆ ಇಲ್ಲದ ಮೋಡಗಳ ಮತ್ತು ಗಾಳಿಯ ಹಾಗೆ ಇದ್ದಾನೆ.</verse>
				<verse number="15">ತಾಳ್ಮೆಯ ಮೂಲಕ ಪ್ರಭುವನ್ನು ಒಲಿಸಿಕೊಳ್ಳಬಹುದು; ಮೃದುವಾದ ಮಾತು ಎಲುಬನ್ನು ಮುರಿಯುತ್ತದೆ.</verse>
				<verse number="16">ಜೇನನ್ನು ಕಂಡುಕೊಂಡಿದ್ದೀಯಾ? ಅದನ್ನು ನಿನಗೆ ತೃಪ್ತಿಯಾಗುವಷ್ಟೇ ತಿನ್ನು; ಹೊಟ್ಟೆ ತುಂಬಾ ತಿಂದರೆ ಕಾರಬೇಕಾದೀತು.</verse>
				<verse number="17">ನಿನ್ನ ನೆರೆಯವನ ಮನೆಗೆ ಅಪರೂಪಕ್ಕೆ ಹೆಜ್ಜೆ ಇಡು; ಇಲ್ಲವಾದರೆ ನಿನ್ನ ವಿಷಯವಾಗಿ ಅವನು ಬೇಸರಗೊಂಡು ನಿನ್ನನ್ನು ಹಗೆಮಾಡಾನು.</verse>
				<verse number="18">ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಖಡ್ಗ, ಹರಿತವಾದ ಬಾಣವಾಗಿದ್ದಾನೆ.</verse>
				<verse number="19">ಕಷ್ಟಕಾಲದಲ್ಲಿ ಅಪನಂಬಿಗಸ್ತನಾದ ಮನುಷ್ಯನಲ್ಲಿಯ ಭರವಸೆಯು ಮುರಿದ ಹಲ್ಲು, ಕೀಲು ತಪ್ಪಿದ ಪಾದವು.</verse>
				<verse number="20">ಮನಗುಂದಿದವನಿಗೆ ಸಂಗೀತ ಹಾಡುವುದು ಚಳಿಯಲ್ಲಿ ಬಟ್ಟೆ ಬಿಚ್ಚಿದ ಹಾಗೆಯೂ ಹುಳಿ ಉಪ್ಪನ್ನು ಗಾಯಕ್ಕೆ ಹಚ್ಚಿದಂತೆಯೂ.</verse>
				<verse number="21">ನಿನ್ನ ಶತ್ರು ಹಸಿದಿದ್ದರೆ ಉಣ್ಣುವುದಕ್ಕೆ ಅವನಿಗೆ ಊಟಕೊಡು; ಅವನು ಬಾಯಾರಿದ್ದರೆ ಕುಡಿಯುವುದಕ್ಕೆ ನೀರು ಕೊಡು.</verse>
				<verse number="22">ಏಕೆಂದರೆ ಅದು ಅವನ ತಲೆಯ ಮೇಲೆ ಉರಿಯುವ ಬೆಂಕಿಯ ಕೆಂಡಗಳನ್ನು ಸುರಿಯುವಂತಿರುವುದು; ಯೆಹೋವ ದೇವರು ನಿನಗೆ ಪ್ರತಿಫಲ ಕೊಡುವರು.</verse>
				<verse number="23">ಅನಿರೀಕ್ಷಿತ ಮಳೆಯನ್ನು ತರುವ ಉತ್ತರದ ಗಾಳಿಯಂತೆ ಚಾಡಿಯ ನಾಲಿಗೆ ಕೋಪದ ಮುಖ ಮಾಡುತ್ತದೆ.</verse>
				<verse number="24">ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವುದಕ್ಕಿಂತ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದು ಲೇಸು.</verse>
				<verse number="25">ಬಾಯಾರಿದವನಿಗೆ ತಣ್ಣೀರು ಹೇಗೋ ದೂರದೇಶದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.</verse>
				<verse number="26">ದುಷ್ಟರ ಮುಂದೆ ನೀತಿವಂತನು ಸೋಲುವುದು, ಕೆಸರಿನ ಬುಗ್ಗೆಗೂ ಕೊಳಕು ಒರತೆಗೂ ಸಮಾನ.</verse>
				<verse number="27">ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವುದು ಗೌರವವಲ್ಲ.</verse>
				<verse number="28">ತನ್ನ ಸ್ವಂತ ಆತ್ಮವನ್ನು ಆಳದಿರುವವನು, ಗೋಡೆ ಬಿದ್ದ ಹಾಳೂರಿಗೆ ಸಮಾನ.</verse>
			</chapter>
			<chapter number="26">
				<verse number="1">ಬೇಸಿಗೆಯಲ್ಲಿ ಹಿಮದಂತೆಯೂ, ಸುಗ್ಗಿಯಲ್ಲಿ ಮಳೆಯಂತೆಯೂ ಬುದ್ಧಿಹೀನನಿಗೆ ಮಾನವು ಸರಿಯಲ್ಲ.</verse>
				<verse number="2">ಅಲೆದಾಡುವ ಪಕ್ಷಿಯಂತೆಯೂ, ಹಾರಾಡುವ ಬಾನಕ್ಕಿಯಂತೆಯೂ ಕಾರಣವಿಲ್ಲದೆ ಕೊಡುವ ಶಾಪವು ತಗಲದು.</verse>
				<verse number="3">ಕುದುರೆಗೆ ಬಾರುಗೋಲು, ಕತ್ತೆಗೆ ಕಡಿವಾಣವು, ಮೂಢನ ಬೆನ್ನಿಗೆ ಬೆತ್ತ.</verse>
				<verse number="4">ಮೂಢನ ಮೂರ್ಖತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನೂ ಅವನಿಗೆ ಸಮಾನನಾದೀಯೆ.</verse>
				<verse number="5">ಮೂಢನ ಮೂರ್ಖತನಕ್ಕೆ ತಕ್ಕಂತೆ ಉತ್ತರಕೊಡು; ಇಲ್ಲವಾದರೆ ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.</verse>
				<verse number="6">ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು ತನ್ನ ಪಾದಗಳನ್ನು ತಾನೇ ಕಡಿದುಕೊಂಡು ಇಲ್ಲವೆ ಕೇಡನ್ನು ಕುಡಿಯುತ್ತಾನೆ.</verse>
				<verse number="7">ಕುಂಟನ ಕಾಲುಗಳು ಜೋಲಾಡುವ ಹಾಗೆಯೇ, ಬುದ್ಧಿಹೀನರ ಬಾಯಲ್ಲಿ ಜ್ಞಾನೋಕ್ತಿಯು ಇರುತ್ತದೆ.</verse>
				<verse number="8">ಮೂಢನಿಗೆ ಕೊಡುವ ಮಾನವು ಕವಣಿಯಲ್ಲಿಟ್ಟ ಕಲ್ಲಿನ ಹಾಗೆ.</verse>
				<verse number="9">ಕುಡುಕನ ಕೈಯಲ್ಲಿ ಮುಳ್ಳು ಕೋಲಿನಂತೆ ಬುದ್ಧಿಹೀನರ ಬಾಯಲ್ಲಿ ಜ್ಞಾನೋಕ್ತಿಯು ಇರುವುದು.</verse>
				<verse number="10">ಮೂಢರನ್ನೂ ದಾರಿಹೋಕರನ್ನೂ ಕೂಲಿಗೆ ಕರೆಯುವವನು ಯಾರಿಗಾದರೂ ತಗಲಲಿ ಎಂದು ಬಾಣ ಎಸೆಯುವ ಬಿಲ್ಲುಗಾರನಂತೆ.</verse>
				<verse number="11">ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ.</verse>
				<verse number="12">ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ಕಾಣುತ್ತಿದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ.</verse>
				<verse number="13">ಸೋಮಾರಿಯು, “ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಭೀಕರ ಸಿಂಹ ಇದೆ,” ಎಂದು ಹೇಳುತ್ತಾನೆ.</verse>
				<verse number="14">ಬಾಗಿಲು ತಿರುಗುಣಿಗಳ ಮೇಲೆ ಹೇಗೆ ತಿರುಗುತ್ತದೋ, ಹಾಗೆಯೇ ಸೋಮಾರಿಯು ತನ್ನ ಹಾಸಿಗೆಯ ಮೇಲೆ ಹೊರಳಾಡುತ್ತಾನೆ.</verse>
				<verse number="15">ಸೋಮಾರಿಯು ತಟ್ಟೆಯಲ್ಲಿ ತನ್ನ ಕೈಯನ್ನು ಹಾಕಿ, ತಿರುಗಿ ಅದನ್ನು ತನ್ನ ಬಾಯಿಗೆ ತರಲಾರದಷ್ಟು ಆಯಾಸಪಡುತ್ತಾನೆ.</verse>
				<verse number="16">ಜ್ಞಾನದಿಂದ ಉತ್ತರಿಸಬಲ್ಲ ಏಳು ಜನರಿಗಿಂತ, ತಾನೇ ಜ್ಞಾನಿ ಎಂದು ಸೋಮಾರಿಯು ಭಾವಿಸುತ್ತಾನೆ.</verse>
				<verse number="17">ಒಬ್ಬನು ಹಾದುಹೋಗುತ್ತಾ ತನಗೆ ಸಂಬಂಧಿಸದೇ ಇರುವ ವ್ಯಾಜ್ಯದಲ್ಲಿ ತಲೆಹಾಕುವವನು ನಾಯಿಯ ಕಿವಿ ಹಿಡಿದವನಂತೆ ಇದ್ದಾನೆ.</verse>
				<verse number="18">ತನ್ನ ನೆರೆಯವನನ್ನು ಮೋಸಗೊಳಿಸಿ, “ಇದು ತಮಾಷೆಗೋಸ್ಕರ ಮಾಡುತ್ತೇನೆ,” ಎಂದು ಹೇಳುವವನು, ಕೊಳ್ಳಿಗಳನ್ನೂ, ಬಾಣಗಳನ್ನೂ, ಸಾವನ್ನೂ ಬೀರುವ ಹುಚ್ಚನಂತೆಯೇ.</verse>
				<verse number="19">ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿಹೋಗುತ್ತದೆ; ಹಾಗೆಯೇ ಚಾಡಿಕೋರನು ಇಲ್ಲದಿರುವಲ್ಲಿ ಜಗಳ ಶಮನವಾಗುವುದು.</verse>
				<verse number="20">ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹ ಮಾಡುವವನು ಇರುವನು.</verse>
				<verse number="21">ಚಾಡಿಕೋರನ ಮಾತುಗಳು ರುಚಿಕರ ಭಕ್ಷ್ಯದ ಹಾಗೆ ಹೊಟ್ಟೆಯ ಅಂತರ್ಭಾಗಗಳಿಗೆ ಇಳಿಯುತ್ತವೆ.</verse>
				<verse number="22">ಕೆಟ್ಟ ಹೃದಯದಿಂದ ಸವಿನುಡಿಯುವ ತುಟಿಯು, ಬೆಳ್ಳಿಯ ಹೊದಿಕೆಯಿಂದ ಮುಚ್ಚಲ್ಪಟ್ಟ ಬೋಕಿಯಂತೆ ಇದೆ.</verse>
				<verse number="23">ಶತ್ರುಗಳು ತಮ್ಮ ತುಟಿಗಳಿಂದ ವೇಷ ಧರಿಸುತ್ತಾರೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾರೆ.</verse>
				<verse number="24">ಸವಿಮಾತನ್ನಾಡಿದರೆ ಅವನನ್ನು ನಂಬಬೇಡ; ಏಕೆಂದರೆ ಅವನ ಹೃದಯದಲ್ಲಿ ಏಳು ಅಸಹ್ಯ ಕಾರ್ಯಗಳಿವೆ.</verse>
				<verse number="25">ಅವನ ಹಗೆತನವು ಮೋಸದಿಂದ ಮುಚ್ಚಲ್ಪಟ್ಟಿದ್ದರೂ, ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವುದು.</verse>
				<verse number="26">ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರುಗಿ ಹೊರಳುವುದು.</verse>
				<verse number="27">ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ಹಗೆ ಮಾಡುವನು; ಮುಖಸ್ತುತಿ ಮಾಡುವ ಬಾಯಿಯು ನಾಶವನ್ನುಂಟುಮಾಡುತ್ತದೆ.</verse>
			</chapter>
			<chapter number="27">
				<verse number="1">ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ; ಏಕೆಂದರೆ ಒಂದು ದಿನದೊಳಗೆ ಏನಾಗುವುದೋ ನಿನಗೆ ತಿಳಿಯದು.</verse>
				<verse number="2">ನಿನ್ನ ಬಾಯಿ ಅಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ; ನಿನ್ನ ಸ್ವಂತ ತುಟಿಗಳಲ್ಲ, ಪರನೇ ನಿನ್ನನ್ನು ಹೊಗಳಲಿ.</verse>
				<verse number="3">ಕಲ್ಲು ಭಾರ, ಮರಳು ಭಾರ; ಆದರೆ ಇವೆರಡಕ್ಕಿಂತ ಮೂಢನ ಕೋಪವು ಬಹು ಭಾರ.</verse>
				<verse number="4">ಕ್ರೋಧವು ಕ್ರೂರ, ಕೋಪವು ಪ್ರವಾಹ; ಆದರೆ ಅಸೂಯೆದ ಮುಂದೆ ಯಾವನು ನಿಂತಾನು?</verse>
				<verse number="5">ರಹಸ್ಯವಾದ ಪ್ರೀತಿಗಿಂತಲೂ ಬಹಿರಂಗವಾದ ಗದರಿಕೆಯೇ ಲೇಸು.</verse>
				<verse number="6">ಸ್ನೇಹಿತನು ಮಾಡುವ ಗಾಯಗಳು ಭರವಸೆಗೆ ಯೋಗ್ಯವಾದದ್ದು; ಆದರೆ ಶತ್ರುವಿನ ಮುದ್ದುಗಳು ಹೇರಳವಾಗಿವೆ.</verse>
				<verse number="7">ತೃಪ್ತಿ ಹೊಂದಿದವನು ಜೇನುತುಪ್ಪವನ್ನೂ ಅಸಹ್ಯಿಸಿಕೊಳ್ಳುತ್ತಾನೆ; ಆದರೆ ಹಸಿದವನಿಗೆ ಕಹಿಯಾದ ಪ್ರತಿಯೊಂದು ವಸ್ತುವು ಸಿಹಿಯಾಗಿದೆ.</verse>
				<verse number="8">ತನ್ನ ಮನೆಯನ್ನು ಬಿಟ್ಟು ಅಲೆಯುವ ಮನುಷ್ಯನು ತನ್ನ ಗೂಡನ್ನು ಬಿಟ್ಟು ಅಲೆಯುವ ಪಕ್ಷಿಯಂತೆ ಇದ್ದಾನೆ.</verse>
				<verse number="9">ತೈಲವೂ ಸುಗಂಧದ್ರವ್ಯವೂ ಹೃದಯವನ್ನು ಸಂತೋಷಪಡಿಸುವ ಹಾಗೆ, ಆದರಣೆಯ ಸಲಹೆಯೂ ಸ್ನೇಹಿತನಿಗೆ ಮಧುರವಾಗಿರುತ್ತದೆ.</verse>
				<verse number="10">ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ; ಅಲ್ಲದೆ ನಿನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನ ಸಹೋದರನ ಮನೆಗೆ ಹೋಗಬೇಡ; ಏಕೆಂದರೆ ದೂರವಾಗಿರುವ ಸಹೋದರನಿಗಿಂತ ಹತ್ತಿರವಾಗಿರುವ ನೆರೆಯವನೇ ಲೇಸು.</verse>
				<verse number="11">ನನ್ನನ್ನು ನಿಂದಿಸುವವರಿಗೆ ನಾನು ಉತ್ತರಿಸುವಂತೆಯೂ, ನನ್ನ ಹೃದಯವನ್ನು ಸಂತೋಷಪಡಿಸುವಂತೆಯೂ, ನನ್ನ ಮಗುವೇ, ಜ್ಞಾನಿಯಾಗಿರು.</verse>
				<verse number="12">ಜಾಣನು ಕೇಡನ್ನು ಮುಂದಾಗಿ ಕಂಡು ಅಡಗಿಕೊಳ್ಳುತ್ತಾನೆ; ಆದರೆ ಮುಗ್ಧನು ಮುಂದೆ ಹೋಗಿ ಹಾನಿಗೆ ಈಡಾಗುತ್ತಾನೆ.</verse>
				<verse number="13">ಅಪರಿಚಿತನಿಗೆ ಭದ್ರತೆಯನ್ನು ನೀಡುವವನ ವಸ್ತ್ರವನ್ನು ತೆಗೆದುಕೋ; ವಿದೇಶಿಯರಿಗೆ ಇದನ್ನು ಮಾಡಿದರೆ ಅದನ್ನು ಒತ್ತೆ ಇಟ್ಟುಕೋ.</verse>
				<verse number="14">ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ, ಅದು ಶಾಪವೆಂದು ಪರಿಗಣಿಸಲಾಗುವುದು.</verse>
				<verse number="15">ಜಗಳ ಮಾಡುವ ಹೆಂಡತಿಯು ಮಳೆಗಾಲದಲ್ಲಿ ಸೋರುವ ಛಾವಣಿಯಂತಿದೆ.</verse>
				<verse number="16">ಅವಳನ್ನು ಅಡಗಿಸುವುದು, ಗಾಳಿಯನ್ನು ಅಡಗಿಸಿದಂತೆ; ಕೈಯಿಂದ ಎಣ್ಣೆಯನ್ನು ಹಿಡಿದಂತೆ.</verse>
				<verse number="17">ಕಬ್ಬಿಣವು ಕಬ್ಬಿಣವನ್ನು ಹರಿತ ಮಾಡುವಂತೆ ಒಬ್ಬನು ಮತ್ತೊಬ್ಬನನ್ನು ಹರಿತ ಮಾಡುವನು.</verse>
				<verse number="18">ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು; ಹಾಗೆಯೇ ಯಜಮಾನನಿಗಾಗಿ ಕಾಯುವವನು ಸನ್ಮಾನ ಹೊಂದುವನು.</verse>
				<verse number="19">ನೀರಿನಲ್ಲಿ ಮುಖವು ಪ್ರತಿಬಿಂಬಿಸುವಂತೆ ಮನುಷ್ಯನ ಜೀವನವು ಅವನ ಹೃದಯವನ್ನು ಪ್ರತಿಬಿಂಬಿಸುತ್ತದೆ.</verse>
				<verse number="20">ಪಾತಾಳಕ್ಕೂ ವಿನಾಶಕ್ಕೂ ತೃಪ್ತಿ ಇಲ್ಲವೇ ಇಲ್ಲ; ಹಾಗೆಯೇ, ಮನುಷ್ಯನ ಕಣ್ಣುಗಳು ಎಂದಿಗೂ ತೃಪ್ತಿಹೊಂದುವುದಿಲ್ಲ.</verse>
				<verse number="21">ಬೆಳ್ಳಿ, ಬಂಗಾರಗಳ ಪುಟಕ್ಕೆ ಕುಲುಮೆ ಹೇಗೆಯೋ, ಹಾಗೆಯೇ ಹೊಗಳಿಕೆಯು ಮನುಷ್ಯನನ್ನು ಪರೀಕ್ಷಿಸುತ್ತದೆ.</verse>
				<verse number="22">ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಹಾಕಿ, ಒಣಕೆಯಿಂದ ಕುಟ್ಟಿದರೂ, ಅವನಿಂದ ಮೂರ್ಖನತವು ತೊಲಗುವುದಿಲ್ಲ.</verse>
				<verse number="23">ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ.</verse>
				<verse number="24">ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ತಲತಲಾಂತರಕ್ಕೂ ಇರುವುದಿಲ್ಲ.</verse>
				<verse number="25">ಒಣಹುಲ್ಲನ್ನು ಕೊಯ್ದು ನಂತರ ಹೊಸ ಬೆಳೆ ಕಾಣಿಸಿಕೊಂಡಾಗ ಮತ್ತು ಬೆಟ್ಟಗಳಿಂದ ಹುಲ್ಲು ಸಂಗ್ರಹಿಸಿದಾಗ,</verse>
				<verse number="26">ಆಗ ಕುರಿಮರಿಗಳು ನಿಮಗೆ ಬಟ್ಟೆಗಳನ್ನು ಒದಗಿಸುತ್ತವೆ, ಆಡುಗಳ ಬೆಲೆಗೆ ನೀವು ಹೊಲವನ್ನು ಖರೀದಿಸಬಹುದು,</verse>
				<verse number="27">ನಿನ್ನ ಊಟಕ್ಕಾಗಿಯೂ, ನಿನ್ನ ಮನೆಯವರ ಆಹಾರಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಬೇಕಾದಷ್ಟು ಆಡುಗಳ ಹಾಲು ಸಾಕಾಗುತ್ತದೆ.</verse>
			</chapter>
			<chapter number="28">
				<verse number="1">ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟನು ಓಡಿಹೋಗುತ್ತಾನೆ. ಆದರೆ ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.</verse>
				<verse number="2">ದೇಶದ ದಂಗೆಯಿಂದ ಅನೇಕರು ನಾಯಕರಾಗುತ್ತಾರೆ. ಆದರೆ ಒಳನೋಟ ಹಾಗು ತಿಳುವಳಿಕೆಯ ನಾಯಕನಿಂದಲೇ ದೇಶವು ಸುಸ್ಥಿರವಾಗುವುದು.</verse>
				<verse number="3">ಬಡವರನ್ನು ಹಿಂಸಿಸುವ ಅಧಿಕಾರಿಯು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.</verse>
				<verse number="4">ಬೋಧನೆಯನ್ನು ತ್ಯಜಿಸುವವರು ದುಷ್ಟರನ್ನು ಹೊಗಳುತ್ತಾರೆ; ಆದರೆ ಬೋಧನೆಯನ್ನು ಕೈಗೊಳ್ಳುವವರು ಅವರೊಂದಿಗೆ ಹೋರಾಡುತ್ತಾರೆ.</verse>
				<verse number="5">ನ್ಯಾಯವನ್ನು ದುಷ್ಟರು ಗ್ರಹಿಸುವುದಿಲ್ಲ; ಆದರೆ ಯೆಹೋವ ದೇವರನ್ನು ಹುಡುಕುವವರು ಎಲ್ಲವುಗಳನ್ನು ಗ್ರಹಿಸುತ್ತಾರೆ.</verse>
				<verse number="6">ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರವಾಗಿರುವವನಿಗಿಂತ ನಿರ್ದೋಷಿಯಾಗಿ ನಡೆಯುವ ದರಿದ್ರನು ಶ್ರೇಷ್ಠನು.</verse>
				<verse number="7">ವಿವೇಚನೆಯ ಮಗನು ದೇವರ ಶಿಕ್ಷಣವನ್ನು ಕೈಗೊಳ್ಳುವನು. ಆದರೆ ಹೊಟ್ಟೆಬಾಕರ ಸಂಗಡಿಗನು ತನ್ನ ತಂದೆಯನ್ನು ಅವಮಾನಪಡಿಸುತ್ತಾನೆ.</verse>
				<verse number="8">ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು, ಬಡವರ ಮೇಲೆ ದಯೆ ತೋರಿಸುವವನಿಗೆ ಅದನ್ನು ಕೂಡಿಸುವನು.</verse>
				<verse number="9">ಶಿಕ್ಷಣವನ್ನು ಕೇಳದಂತೆ ತನ್ನ ಕಿವಿ ಮುಚ್ಚಿಕೊಳ್ಳುವವನ ಪ್ರಾರ್ಥನೆಯು ದೇವರಿಗೆ ಅಸಹ್ಯ.</verse>
				<verse number="10">ಪ್ರಾಮಾಣಿಕರನ್ನು ದುರ್ಮಾರ್ಗದಲ್ಲಿ ದಾರಿತಪ್ಪಿಸುವವನು, ತಾನೇ ತೋಡಿದ ಗುಂಡಿಯಲ್ಲಿ ಬೀಳುವನು. ನಿರ್ದೋಷಿಗಳಾದರೋ ಒಳ್ಳೆಯ ಸೊತ್ತನ್ನು ಪಡೆಯುವರು.</verse>
				<verse number="11">ಐಶ್ವರ್ಯವಂತನು ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾಗಿದ್ದಾನೆ. ಆದರೆ ವಿವೇಚನೆಯುಳ್ಳ ಬಡವನು ಅವನ ವಂಚನೆಯನ್ನು ನೋಡಬಲ್ಲನು.</verse>
				<verse number="12">ನೀತಿವಂತರಿಗೆ ಜಯವಾದರೆ, ದೊಡ್ಡ ಘನತೆ ಇರುವುದು. ಆದರೆ ದುಷ್ಟರಿಗೆ ಏಳಿಗೆಯಾದರೆ, ಮನುಷ್ಯರು ಅಡಗಿಕೊಳ್ಳುತ್ತಾರೆ.</verse>
				<verse number="13">ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ. ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.</verse>
				<verse number="14">ಯಾವಾಗಲೂ ಯೆಹೋವ ದೇವರ ಭಯಭಕ್ತಿಯಲ್ಲಿ ನಡೆದುಕೊಳ್ಳುವವನು ಧನ್ಯನು. ಆದರೆ ಹೃದಯವನ್ನು ಕಠಿಣಪಡಿಸಿಕೊಳ್ಳುವವನು ಕೇಡಿಗೆ ಸಿಕ್ಕಿಬೀಳುವನು.</verse>
				<verse number="15">ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ, ಬಡವರನ್ನು ದುಷ್ಟನು ಆಳುವನು.</verse>
				<verse number="16">ಗ್ರಹಿಕೆಯಿಲ್ಲದ ಅಧಿಕಾರಿಯು ಮಹಾ ಸುಲಿಗೆಗಾರನು. ಆದರೆ ಲೋಭವನ್ನು ಹಗೆಮಾಡುವವನು ದೀರ್ಘಾಯುಷ್ಯನು.</verse>
				<verse number="17">ನರಹತ್ಯದ ಅಪರಾಧ ಭಾವನೆಯಿಂದ ಇರುವವನು, ಮರಣದೆಡೆಗೆ ಓಡುತ್ತಿರುವನು, ಅವನನ್ನು ಯಾರೂ ತಡೆಯದಿರಲಿ.</verse>
				<verse number="18">ನಿರ್ದೋಷಿಯಾಗಿ ನಡೆಯುವವನು ಸಂರಕ್ಷಣೆ ಹೊಂದುವನು. ವಕ್ರಮಾರ್ಗಿಯು ತಟ್ಟನೆ ಬೀಳುವನು.</verse>
				<verse number="19">ತನ್ನ ಹೊಲವನ್ನು ವ್ಯವಸಾಯ ಮಾಡುವವನು ಆಹಾರದಿಂದ ತೃಪ್ತಿಹೊಂದುವನು. ಆದರೆ ವ್ಯರ್ಥ ಕಾರ್ಯವನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವುದು.</verse>
				<verse number="20">ನಂಬಿಗಸ್ತನಾದ ಮನುಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು, ನಿರ್ದೋಷಿಯಾಗಿರುವುದಿಲ್ಲ.</verse>
				<verse number="21">ಪಕ್ಷಪಾತವು ಸರಿಯಲ್ಲ; ತುತ್ತು ರೊಟ್ಟಿಗಾಗಿ ಒಬ್ಬನು ದ್ರೋಹ ಮಾಡುವನು.</verse>
				<verse number="22">ಧನವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವನಾಗಿದ್ದಾನೆ; ತನಗೆ ಬಡತನವು ಬರುವುದನ್ನು ಅವನು ಯೋಚಿಸುವುದಿಲ್ಲ.</verse>
				<verse number="23">ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ, ಒಬ್ಬನನ್ನು ಗದರಿಸುವವನು ತರುವಾಯ ಹೆಚ್ಚು ದಯಾಪಾತ್ರನಾಗುವನು.</verse>
				<verse number="24">ತನ್ನ ತಂದೆಯಾನ್ನಾಗಲಿ, ತಾಯಿಯನ್ನಾಗಲಿ ದೋಚಿಕೊಂಡು, “ಇದು ದೋಷವಲ್ಲ,” ಎಂದು ಹೇಳುವವನು ಕೆಡುಕನಿಗೆ ಜೊತೆಗಾರನು.</verse>
				<verse number="25">ದುರಾಶೆಯುಳ್ಳವನು ಕಲಹವನ್ನೆಬ್ಬಿಸುವನು; ಯೆಹೋವ ದೇವರಲ್ಲಿ ಭರವಸವಿಡುವವನು ಪುಷ್ಟನಾಗುವನು.</verse>
				<verse number="26">ತನ್ನ ಬುದ್ಧಿಯಲ್ಲಿಯೇ ಭರವಸವಿಡುವವನು ಬುದ್ಧಿಹೀನನು; ಆದರೆ ಜ್ಞಾನದಿಂದ ನಡೆಯುವವನು ಉದ್ಧಾರ ಹೊಂದುವನು.</verse>
				<verse number="27">ಬಡವರಿಗೆ ದಾನ ಮಾಡುವವನು, ಕೊರತೆ ಪಡುವುದಿಲ್ಲ; ಆದರೆ ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುವವನಿಗೆ ಅನೇಕ ಶಾಪಗಳು.</verse>
				<verse number="28">ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ, ಆದರೆ ಅವರು ನಾಶವಾದಾಗ ನೀತಿವಂತರು ವೃದ್ಧಿಯಾಗುತ್ತಾರೆ.</verse>
			</chapter>
			<chapter number="29">
				<verse number="1">ಅನೇಕಬಾರಿ ಗದರಿಸಿದರೂ ತಗ್ಗದ ಹಟಮಾರಿ ಪರಿಹಾರವಿಲ್ಲದೆ ಫಕ್ಕನೆ ಮುರಿದು ಬೀಳುವನು.</verse>
				<verse number="2">ಶಿಷ್ಟರು ಅಧಿಕಾರಕ್ಕೆ ಬಂದರೆ ಜನರು ಹರ್ಷಿಸುತ್ತಾರೆ. ಆದರೆ ದುಷ್ಟರು ಆಳಿದರೆ, ಜನರಿಗೆ ನರಳಾಟ.</verse>
				<verse number="3">ಜ್ಞಾನಪ್ರಿಯನು ತಂದೆಗೆ ಆನಂದ ಆದರೆ ವೇಶ್ಯೆಯರ ಸಹವಾಸದಿಂದ ಆಸ್ತಿಯ ವಿನಾಶ.</verse>
				<verse number="4">ನ್ಯಾಯದಿಂದ ಅರಸನು ದೇಶವನ್ನು ಸ್ಥಿರಗೊಳಿಸುತ್ತಾನೆ, ಆದರೆ ಲಂಚಕೋರ ಅಧಿಕಾರಿ ದೇಶವನ್ನು ಕೆಡವಿ ಹಾಕುತ್ತಾನೆ.</verse>
				<verse number="5">ತನ್ನ ನೆರೆಯವನನ್ನು ಸುಮ್ಮನೇ ಹೊಗಳುತ್ತಿರುವವನು, ನೆರೆಯವನ ಕಾಲಿಗೆ ಬಲೆಯನ್ನು ಒಡ್ಡುತ್ತಾನೆ.</verse>
				<verse number="6">ಕೆಟ್ಟವನು ತನ್ನ ಪಾಪದಿಂದಲೇ ಸಿಕ್ಕಿಹಾಕಿಕೊಳ್ಳುತ್ತಾನೆ, ಆದರೆ ನೀತಿವಂತನು ಸಂತೋಷದಿಂದ ಹಾಡಿ ಹರ್ಷಿಸುತ್ತಾನೆ.</verse>
				<verse number="7">ಬಡವರ ನ್ಯಾಯಕ್ಕಾಗಿ ನೀತಿವಂತನು ಚಿಂತಿಸುತ್ತಾನೆ. ಆದರೆ ದುಷ್ಟನಿಗೆ ಅಂಥಾ ಚಿಂತೆಯೇ ಇಲ್ಲ.</verse>
				<verse number="8">ಪರಿಹಾಸ್ಯಗಾರರು ಪಟ್ಟಣದಲ್ಲಿ ಗಲಾಟೆ ಎಬ್ಬಿಸುತ್ತಾರೆ. ಆದರೆ ಜ್ಞಾನಿಗಳು ಕೋಪವನ್ನು ಆರಿಸುವರು.</verse>
				<verse number="9">ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯಮಾಡುವಾಗ, ಮೂರ್ಖನು ರೇಗಿದರೂ ಅಪಹಾಸ್ಯಮಾಡಿದರೂ ಸಮಾಧಾನವೇ ಇರುವುದಿಲ್ಲ.</verse>
				<verse number="10">ಕೊಲೆಪಾತಕರು ಪ್ರಾಮಾಣಿಕರನ್ನು ದ್ವೇಷಿಸುತ್ತಾರೆ. ಆದರೆ ಯಥಾರ್ಥವಂತರನ್ನು ನಾಶಮಾಡಲು ಯತ್ನಿಸುತ್ತಾರೆ.</verse>
				<verse number="11">ಮೂಢನು ತನ್ನ ಕೋಪವನ್ನೆಲ್ಲಾ ವ್ಯಕ್ತಪಡಿಸುವನು. ಆದರೆ ಜ್ಞಾನಿಯು ಕೋಪವನ್ನು ಶಾಂತಿಯಿಂದ ತಡೆಹಿಡಿಯುತ್ತಾನೆ.</verse>
				<verse number="12">ಒಬ್ಬ ಅಧಿಕಾರಿಯು ಸುಳ್ಳಿಗೆ ಕಿವಿಗೊಟ್ಟರೆ, ಅವನ ಸೇವಕರೆಲ್ಲರೂ ದುಷ್ಟರಾಗುತ್ತಾರೆ.</verse>
				<verse number="13">ಬಡವರಿಗೂ ದಬ್ಬಾಳಿಕೆ ನಡೆಸುವವರಿಗೂ ಒಂದು ಸಂಗತಿ ಹುದುವಾಗಿರುವುದು: ಯೆಹೋವ ದೇವರು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುವರು ಎಂಬುದೇ.</verse>
				<verse number="14">ಅರಸನು ಬಡವರಿಗೆ ಪಕ್ಷಪಾತವಿಲ್ಲದೆ ನ್ಯಾಯತೀರಿಸಿದರೆ, ಅವನ ಸಿಂಹಾಸನವು ಎಂದೆಂದಿಗೂ ಸ್ಥಿರಗೊಳ್ಳುವುದು.</verse>
				<verse number="15">ಬೆತ್ತ ಮತ್ತು ಬೆದರಿಕೆಗಳು ಜ್ಞಾನವನ್ನುಂಟುಮಾಡುತ್ತವೆ; ಆದರೆ ಶಿಕ್ಷಿಸದೆ ಬಿಟ್ಟ ಹುಡುಗನು ತನ್ನ ತಾಯಿಗೆ ಅವಮಾನವನ್ನು ತರುತ್ತಾನೆ.</verse>
				<verse number="16">ದುಷ್ಟರು ವೃದ್ಧಿಯಾದಾಗ, ಪಾಪವು ವೃದ್ಧಿಯಾಗುತ್ತದೆ. ಆದರೆ ನೀತಿವಂತರು ದುಷ್ಟರ ಬೀಳುವಿಕೆಯನ್ನು ಕಣ್ಣಾರೆ ನೋಡುವರು.</verse>
				<verse number="17">ನಿನ್ನ ಮಕ್ಕಳನ್ನು ಶಿಕ್ಷಿಸಿದರೆ, ಅವರು ನಿನಗೆ ಮನಶಾಂತಿಯನ್ನು ಕೊಡುವರು; ಹೌದು, ಅವರು ನೀನು ಬಯಸುವ ಹರ್ಷವನ್ನು ನಿನಗೆ ತರುವರು.</verse>
				<verse number="18">ದೈವ ಪ್ರಕಟನೆ ಇಲ್ಲದಿರುವಾಗ, ಜನರು ನಾಶವಾಗುತ್ತಾರೆ; ಆದರೆ ಜ್ಞಾನೋಪದೇಶವನ್ನು ಕೈಗೊಳ್ಳುವವನು ಧನ್ಯನು.</verse>
				<verse number="19">ಮಾತಿನಿಂದ ಮಾತ್ರ ಕೆಲಸಗಾರರನ್ನು ತಿದ್ದಲು ಸಾಧ್ಯವಿಲ್ಲ; ಏಕೆಂದರೆ ಅವರು ಅರ್ಥಮಾಡಿಕೊಂಡರೂ, ಅದರಂತೆ ನಡೆಯುವುದಿಲ್ಲ.</verse>
				<verse number="20">ದುಡುಕಿ ಮಾತನಾಡುವ ವ್ಯಕ್ತಿಯನ್ನು ನೀನು ನೋಡಿದ್ದೀಯೋ? ಅಂಥವನಿಗಿಂತಲೂ ಬುದ್ಧಿಹೀನನ ವಿಷಯದಲ್ಲಿ ಹೆಚ್ಚು ನಿರೀಕ್ಷೆ ಇದೆ.</verse>
				<verse number="21">ಬಾಲ್ಯದಿಂದ ಕೆಲಸಗಾರನನ್ನು ಅನುಕೂಲವಾಗಿ ಸಾಕಿ ಬಿಟ್ಟರೆ, ತರುವಾಯ ಅವನು ಎದುರು ಬೀಳಲು ಸಾಧ್ಯ.</verse>
				<verse number="22">ಕೋಪಿಷ್ಟನು ಜಗಳವನ್ನೆಬ್ಬಿಸುವನು, ಮುಂಗೋಪಿಯು ಅನೇಕ ಪಾಪಗಳನ್ನು ಮಾಡುತ್ತಾನೆ.</verse>
				<verse number="23">ಗರ್ವವು ಮನುಷ್ಯನನ್ನು ಹೀನಸ್ಥಿತಿಗೆ ತರುವುದು; ಆದರೆ ಆತ್ಮದಲ್ಲಿ ದೀನರು ಮೆಚ್ಚಿಕೆಯನ್ನು ಪಡೆಯುವರು.</verse>
				<verse number="24">ಕಳ್ಳರ ಸಹವಾಸ ಮಾಡುವವರು ತಮಗೆ ತಾವೇ ಶತ್ರುಗಳು. ಅವರು ಆಣೆ ಇಟ್ಟರೂ ಅವರಲ್ಲಿ ಬದಲಾವಣೆ ಇರುವುದಿಲ್ಲ.</verse>
				<verse number="25">ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು; ಯೆಹೋವ ದೇವರಲ್ಲಿ ಭರವಸವಿಡುವವನು, ಸಂರಕ್ಷಣೆ ಹೊಂದುವನು.</verse>
				<verse number="26">ಅನೇಕರು ಅಧಿಕಾರಿಯ ದಯೆಯನ್ನು ಹುಡುಕುತ್ತಾರೆ. ಆದರೆ ಯೆಹೋವ ದೇವರಿಂದಲೇ ಪ್ರತಿಯೊಬ್ಬರಿಗೂ ನ್ಯಾಯ ದೊರಕುತ್ತದೆ.</verse>
				<verse number="27">ನೀತಿವಂತರು ಅಪ್ರಾಮಾಣಿಕರನ್ನು ದ್ವೇಷಿಸುತ್ತಾರೆ. ದುಷ್ಟರು ಪ್ರಾಮಾಣಿಕರನ್ನು ತಿರಸ್ಕರಿಸುತ್ತಾರೆ.</verse>
			</chapter>
			<chapter number="30">
				<verse number="1">ಜಾಕೆ ಎಂಬುವನ ಮಗನಾದ ಆಗೂರನ ದೈವಿಕ ಬುದ್ಧಿಮಾತುಗಳು. ಇವನು ಇಥಿಯೇಲನಿಗೂ ಉಕ್ಕಾಲನಿಗೂ ಹೀಗೆ ಹೇಳಿದನು: “ದೇವರೇ, ನಾನು ದಣಿದಿದ್ದೇನೆ, ಆದರೆ ನಾನು ಜಯಶಾಲಿಯಾಗುವೆನು.</verse>
				<verse number="2">ಖಂಡಿತವಾಗಿಯೂ ನಾನು ಮನುಷ್ಯನಲ್ಲ, ಮೃಗ. ನನಗೆ ಮನುಷ್ಯನ ಗ್ರಹಿಕೆ ಇಲ್ಲ.</verse>
				<verse number="3">ನಾನು ಜ್ಞಾನವನ್ನು ಕಲಿತುಕೊಂಡಿಲ್ಲ; ಅಲ್ಲದೆ ಪರಿಶುದ್ಧ ದೇವರ ಅರಿವು ನನಗಿಲ್ಲ.</verse>
				<verse number="4">ಯಾರು ಸ್ವರ್ಗಕ್ಕೆ ಹೋಗಿ ಕೆಳಗಿಳಿದು ಬಂದಿದ್ದಾರೆ? ಯಾರ ಕೈಗಳು ಗಾಳಿಯನ್ನು ಒಟ್ಟುಗೂಡಿಸಿವೆ? ಯಾರು ತಮ್ಮ ವಸ್ತ್ರದಲ್ಲಿ ಸಾಗರಗಳನ್ನು ಮೂಟೆಕಟ್ಟಿಕೊಂಡಿದ್ದಾರೆ? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿದವರು ಯಾರು? ಅವರ ಹೆಸರೇನು? ಅವರ ಮಗನ ಹೆಸರೇನು? ಖಂಡಿತವಾಗಿಯೂ ನಿಮಗೆ ಗೊತ್ತಿರಬೇಕು!</verse>
				<verse number="5">“ದೇವರ ಪ್ರತಿಯೊಂದು ಮಾತು ದೋಷವಿಲ್ಲದ್ದು; ದೇವರಲ್ಲಿ ಭರವಸವಿಡುವವನಿಗೆ ಅವರು ಗುರಾಣಿಯಾಗಿದ್ದಾರೆ.</verse>
				<verse number="6">ದೇವರ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ. ಇಲ್ಲವಾದರೆ ದೇವರು ನಿನ್ನನ್ನು ಗದರಿಸಿ ನಿನ್ನನ್ನು ಸುಳ್ಳುಗಾರನೆಂದು ಸಾಬೀತುಪಡಿಸುವರು.</verse>
				<verse number="7">“ಯೆಹೋವ ದೇವರೇ, ನಾನು ನಿಮ್ಮನ್ನು ಎರಡು ವಿಷಯಗಳನ್ನು ಕೇಳುತ್ತೇನೆ. ನಿರಾಕರಿಸಬೇಡಿ ನಾನು ಸಾಯುವ ಮೊದಲು ಅವೆರಡನ್ನು ಅನುಗ್ರಹಿಸಿರಿ.</verse>
				<verse number="8">ವಂಚನೆ ಸುಳ್ಳನ್ನು ನನ್ನಿಂದ ದೂರಮಾಡಿರಿ. ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ನನಗೆ ಕೊಡಬೇಡಿರಿ. ನನಗೆ ಅನುದಿನದ ಆಹಾರವನ್ನು ದಯಪಾಲಿಸಿರಿ.</verse>
				<verse number="9">ನಾನು ಐಶ್ವರ್ಯವಂತನಾದರೆ ನಿನ್ನನ್ನು ನಿರಾಕರಿಸಿ, ‘ಯೆಹೋವ ದೇವರು ಯಾರು?’ ಎಂದು ಹೇಳೇನು. ನಾನು ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿಮ್ಮ ಹೆಸರಿಗೆ ಅಪಕೀರ್ತಿ ತಂದೇನು.</verse>
				<verse number="10">“ಕೆಲಸಗಾರರ ವಿಷಯವಾಗಿ ಅವನ ಯಜಮಾನನಿಗೆ ದೂರು ಹೇಳಬೇಡ; ಇದರಿಂದ ಆ ಕೆಲಸಗಾರ ನಿನ್ನನ್ನು ಶಪಿಸಾನು, ಆಗ ನೀನು ದೋಷಿಯಾಗುವೆ.</verse>
				<verse number="11">“ತಮ್ಮ ತಂದೆಯನ್ನು ಶಪಿಸಿ, ತಮ್ಮ ತಾಯಿಗೆ ಶುಭವನ್ನು ಕೋರದೆ ಇರುವವರು ಇದ್ದಾರೆ.</verse>
				<verse number="12">ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವವರು ಇದ್ದಾರೆ; ಆದರೆ ಅವರು ತಮ್ಮ ಕೊಳೆಯನ್ನು ತೊಳೆದುಕೊಂಡಿರುವುದಿಲ್ಲ.</verse>
				<verse number="13">ಅವರ ಕಣ್ಣುಗಳು ಯಾವಾಗಲೂ ಅಹಂಕಾರದಿಂದ ಕೂಡಿರುತ್ತವೆ. ಅವರ ದೃಷ್ಟಿ ಅಸಹ್ಯವಾಗಿದೆ.</verse>
				<verse number="14">ಖಡ್ಗಗಳಂತೆ ಹಲ್ಲುಗಳುಳ್ಳವರೂ ಚೂರಿಗಳಂತೆ ದವಡೆಗಳುಳ್ಳವರೂ ಬಡವರನ್ನು ಭೂಮಿಯಿಂದಲೂ ದಿಕ್ಕಿಲ್ಲದವರನ್ನು ಮಾನವಕುಲದಿಂದಲೂ ಕಬಳಿಸುವವರೂ ಆಗಿದ್ದಾರೆ.</verse>
				<verse number="15">“ಜಿಗಣೆಗೆ, ‘ಕೊಡು! ಕೊಡು!’ ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳುಂಟು. “ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ, ಹೌದು, ‘ಸಾಕು!’ ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ:</verse>
				<verse number="16">ಸಮಾಧಿ, ಬಂಜೆಯಾದ ಗರ್ಭ, ನೀರಿನಿಂದ ಎಂದೂ ತೃಪ್ತಿ ಹೊಂದದ ಭೂಮಿ, ‘ಸಾಕು!’ ಎಂದು ಹೇಳದಿರುವ ಬೆಂಕಿ.</verse>
				<verse number="17">“ತನ್ನ ತಂದೆಯನ್ನು ಹಾಸ್ಯಮಾಡಿ, ತನ್ನ ತಾಯಿಯನ್ನು ಧಿಕ್ಕರಿಸುವ ಕಣ್ಣನ್ನು, ಕಣಿವೆಯ ಕಾಗೆಗಳು ಕಿತ್ತು ಕಕ್ಕುವವು. ರಣಹದ್ದುಗಳು ಅದನ್ನು ತಿಂದುಬಿಡುವವು.</verse>
				<verse number="18">“ನನಗೆ ಆಶ್ಚರ್ಯವಾದ ಮೂರು ಸಂಗತಿಗಳಿವೆ, ಹೌದು, ನನಗೆ ಅರ್ಥವಾಗದಿರುವ ನಾಲ್ಕು ಸಂಗತಿಗಳಿವೆ:</verse>
				<verse number="19">ಆಕಾಶದಲ್ಲಿ ಹದ್ದಿನ ಮಾರ್ಗ, ಬಂಡೆಯ ಮೇಲೆ ಸರ್ಪದ ಮಾರ್ಗ, ಸಮುದ್ರ ನಡುವೆ ಹಡಗಿನ ಮಾರ್ಗ, ಯುವಕ ಯುವತಿಯರ ಪ್ರೀತಿ ಮಾರ್ಗ.</verse>
				<verse number="20">“ಜಾರಸ್ತ್ರೀಯ ನಡತೆಯು ಹೀಗಿದೆ: ಅವಳು ತಿಂದು, ತನ್ನ ಬಾಯನ್ನು ಒರೆಸಿಕೊಂಡು ‘ನಾನು ಯಾವುದೇ ತಪ್ಪು ಮಾಡಿಲ್ಲ,’ ಎಂದು ಹೇಳುತ್ತಾಳೆ.</verse>
				<verse number="21">“ಭೂಮಿಯು ಮೂರು ವಿಷಯಗಳಿಂದ ಕಳವಳಗೊಳ್ಳುತ್ತದೆ, ನಾಲ್ವರನ್ನು ಅದು ತಾಳಲಾರದು:</verse>
				<verse number="22">ಅರಸನಾಗುವ ದಾಸನು, ತಿನ್ನಲು ಸಾಕಷ್ಟು ಪಡೆಯುವ ಮೂರ್ಖನು,</verse>
				<verse number="23">ತಿರಸ್ಕಾರಕ್ಕೆ ಅರ್ಹಳಾದ ಮಹಿಳೆ, ಮದುವೆಯಾಗುವುದು. ಪತ್ನಿಯ ಸ್ಥಾನವನ್ನು ಕಸಿದುಕೊಂಡ ದಾಸಿ.</verse>
				<verse number="24">“ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳವುಗಳಾದ ನಾಲ್ಕು ಸಣ್ಣ ಪ್ರಾಣಿಗಳು ಇವೆ:</verse>
				<verse number="25">ಇರುವೆಗಳು ಬಲಹೀನ ಜೀವಿಗಳು, ಆದರೂ ಅವು ಬೇಸಿಗೆಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುತ್ತವೆ.</verse>
				<verse number="26">ಬೆಟ್ಟದ ಮೊಲಗಳು ಬಲಹೀನ ಪ್ರಾಣಿಗಳಾಗಿದ್ದರೂ ಅವು ಬಂಡೆಗಳಲ್ಲಿ ತಮ್ಮ ಮನೆಗಳನ್ನು ಮಾಡಿಕೊಳ್ಳುತ್ತವೆ.</verse>
				<verse number="27">ಮಿಡತೆಗಳಿಗೆ ಅರಸನಿಲ್ಲ; ಆದರೂ ಅವೆಲ್ಲಾ ದಂಡುದಂಡಾಗಿ ಹೋಗುತ್ತವೆ.</verse>
				<verse number="28">ಹಲ್ಲಿಯನ್ನು ಅಂಗೈಯಿಂದ ಹಿಡಿಯಬಹುದಾದರೂ ಅರಸನ ಅರಮನೆಗಳಲ್ಲಿ ಕಂಡುಬರುತ್ತವೆ.</verse>
				<verse number="29">“ಗಂಭೀರ ಗಮನದ ಮೂರು ಪ್ರಾಣಿಗಳಿವೆ, ಹೌದು, ಗಂಭೀರ ಗತಿಯ ನಾಲ್ಕಿವೆ:</verse>
				<verse number="30">ಮೃಗಗಳಲ್ಲಿ ಬಲಿಷ್ಠವಾಗಿರುವ ಸಿಂಹವು, ಯಾವುದಕ್ಕೂ ಹಿಮ್ಮೆಟ್ಟದು.</verse>
				<verse number="31">ಕತ್ತೆತ್ತಿ ನಡೆಯುವ ಹುಂಜ, ಹೋತವು, ತನ್ನ ಸುತ್ತಲೂ ಸೈನಿಕರಿರುವ ಅರಸನು.</verse>
				<verse number="32">“ನೀನು ಹೆಮ್ಮೆಪಟ್ಟು ಮೂರ್ಖನಾಗಿ ನಡೆದಿದ್ದರೆ, ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ, ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೊ.</verse>
				<verse number="33">ಹಾಲನ್ನು ಕಡೆಯುವುದರಿಂದ ಬೆಣ್ಣೆ, ಮೂಗನ್ನು ಹಿಂಡುವುದರಿಂದ ರಕ್ತ, ಹಾಗೆಯೇ ಕೋಪವನ್ನೆಬ್ಬಿಸುವುದರಿಂದ ಜಗಳ.”</verse>
			</chapter>
			<chapter number="31">
				<verse number="1">ಅರಸನಾದ ಲೆಮೂವೇಲನ ಮಾತುಗಳು, ಅಂದರೆ ಅವನ ತಾಯಿಯು ಅವನಿಗೆ ಉಪದೇಶಿಸಿದ ದೈವಿಕ ಬುದ್ಧಿಮಾತುಗಳು:</verse>
				<verse number="2">ನನ್ನ ಮಗನೇ ಕೇಳು, ನನ್ನ ಗರ್ಭಪುತ್ರನೇ ಕೇಳು! ನನ್ನ ಪ್ರಾರ್ಥನೆಗೆ ಉತ್ತರವಾದ ನನ್ನ ಮಗನೇ ಕೇಳು!</verse>
				<verse number="3">ನಿನ್ನ ತ್ರಾಣವನ್ನು ಸ್ತ್ರೀಯರಿಗೆ ಒಪ್ಪಿಸದಿರು. ರಾಜರನ್ನೇ ಹಾಳುಮಾಡಬಲ್ಲ ಸ್ತ್ರೀಯರಿಗೆ ನಿನ್ನ ಹಣ ಸಮಯವನ್ನು ವ್ಯಯಮಾಡದಿರು.</verse>
				<verse number="4">ಲೆಮೂವೇಲನೇ, ಕುಡುಕತನವು ರಾಜರಿಗಾಗಿ ಅಲ್ಲ, ದ್ರಾಕ್ಷಾರಸ ಕುಡಿಯುವದು ರಾಜರಿಗೆ ಯೋಗ್ಯವಲ್ಲ. ಮದ್ಯಪಾನ ಅಧಿಕಾರಿಗಳಿಗೆ ಯೋಗ್ಯವಲ್ಲ;</verse>
				<verse number="5">ಕುಡಿದರೆ ಅವರು ನಿಯಮವನ್ನು ಮರೆತು, ಬಾಧಿತರಿಗೆ ನ್ಯಾಯವನ್ನು ನೀಡುವುದಿಲ್ಲ.</verse>
				<verse number="6">ನಾಶವಾಗುವವರಿಗೆ ಮದ್ಯಪಾನವಿರಲಿ. ಮನೋವ್ಯಥೆಪಡುವವರಿಗೆ ಮದ್ಯವಿರಲಿ.</verse>
				<verse number="7">ಅವರು ಕುಡಿದು ಬಡತನವನ್ನು ಮರೆಯಲಿ. ತಮ್ಮ ಯಾತನೆಯನ್ನು ಜ್ಞಾಪಕಕ್ಕೆ ತಾರದಿರಲಿ.</verse>
				<verse number="8">ತಮಗಾಗಿ ಮಾತನಾಡಲು ಸಾಧ್ಯವಾಗದವರಿಗಾಗಿ ಮಾತನಾಡು, ಅನಾಥರ ಪರವಾಗಿ ನ್ಯಾಯ ದೊರಕುವಂತೆ ಬಾಯಿಬಿಟ್ಟು ಮಾತನಾಡು.</verse>
				<verse number="9">ಅವರ ಪರವಾಗಿ ಮಾತನಾಡಿ, ನೀತಿನ್ಯಾಯವನ್ನು ಸ್ಥಾಪಿಸು. ಬಡವರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ಹಕ್ಕುಬಾಧ್ಯತೆಯನ್ನು ಕಾಪಾಡು.</verse>
				<verse number="10">ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು? ಅವಳು ಹವಳಕ್ಕಿಂತಲೂ ಬಹು ಅಮೂಲ್ಯಳು.</verse>
				<verse number="11">ಅವಳ ಪತಿಯ ಹೃದಯವು ಅವಳಲ್ಲಿ ಭರವಸೆ ಇಡುತ್ತದೆ, ಅವನಿಗೆ ಯಾವ ಆದಾಯದ ಕೊರತೆಯೂ ಇರುವುದಿಲ್ಲ.</verse>
				<verse number="12">ತನ್ನ ಜೀವಮಾನದಲ್ಲೆಲ್ಲಾ ಆಕೆಯು ಅವನಿಗೆ ಕೆಟ್ಟದ್ದನ್ನಲ್ಲ, ಒಳ್ಳೆಯದನ್ನೇ ಮಾಡುವಳು.</verse>
				<verse number="13">ಆಕೆಯು ಉಣ್ಣೆಯನ್ನೂ ಸೆಣಬನ್ನೂ ತಂದು, ತನ್ನ ಚಟುವಟಿಕೆಯ ಕೈಗಳಿಂದ ಕೆಲಸ ಮಾಡುವಳು.</verse>
				<verse number="14">ಆಕೆಯು ವರ್ತಕರ ಹಡಗುಗಳಂತೆ ಇರುವಳು; ದೂರದಿಂದ ಆಹಾರವನ್ನು ಆಕೆಯು ತರುವಳು.</verse>
				<verse number="15">ಇನ್ನೂ ಕತ್ತಲಿರುವಾಗಲೇ ಆಕೆಯು ಏಳುವಳು; ತನ್ನ ಮನೆಯವರಿಗೆ ಆಹಾರವನ್ನು ಕೊಟ್ಟು, ತನ್ನ ದಾಸಿಯರಿಗೆ ದಿನದ ಕೆಲಸವನ್ನು ಹಂಚುವಳು.</verse>
				<verse number="16">ಆಕೆಯು ಹೊಲವನ್ನು ನೋಡಿ, ಅದನ್ನು ಕೊಂಡುಕೊಳ್ಳುತ್ತಾಳೆ. ತನ್ನ ಕೈಕೆಲಸದ ಆದಾಯದಿಂದ ದ್ರಾಕ್ಷಾಲತೆಗಳನ್ನು ನೆಡುತ್ತಾಳೆ.</verse>
				<verse number="17">ಆಕೆಯು ನಡುಕಟ್ಟಿ ಆಸಕ್ತಿಯಿಂದ ಕೆಲಸ ಮಾಡುತ್ತಾಳೆ. ತನ್ನ ಶಕ್ತಿಯುತ ತೋಳುಗಳಿಂದ ಕೆಲಸ ಮಾಡುತ್ತಾಳೆ.</verse>
				<verse number="18">ತನ್ನ ವ್ಯಾಪಾರವು ಲಾಭದಾಯಕವೆಂದು ಅವಳು ನೋಡುತ್ತಾಳೆ. ಆಕೆಯ ದೀಪವು ರಾತ್ರಿಯಲ್ಲೆಲ್ಲಾ ಆರದು.</verse>
				<verse number="19">ಅವಳು ರಾಟೆಯ ಮೇಲೆ ಕೈಹಾಕಿ, ಕದಿರನ್ನು ಹಿಡಿಯುತ್ತಾಳೆ.</verse>
				<verse number="20">ಆಕೆಯು ಬಡವರಿಗಾಗಿ ಕೈ ಬಿಚ್ಚಿ ಕೊಡುತ್ತಾಳೆ. ಹೌದು, ದಿಕ್ಕಿಲ್ಲದವರಿಗೆ ದಾನ ಮಾಡುತ್ತಾಳೆ.</verse>
				<verse number="21">ಚಳಿಗಾಲದಲ್ಲಿ ತನ್ನ ಮನೆಯವರ ಬಗ್ಗೆ ಆಕೆಯು ಚಿಂತಿಸಬೇಕಾಗಿಲ್ಲ. ಏಕೆಂದರೆ ಆಕೆಯ ಮನೆಯವರೆಲ್ಲರಿಗೂ ಬೆಚ್ಚನೆಯ ಕಂಬಳಿಗಳಿವೆ.</verse>
				<verse number="22">ಆಕೆಯು ತಾನೇ ಕಂಬಳಿಗಳನ್ನು ನೇಯುತ್ತಾಳೆ. ಆಕೆಯ ಉಡುಪೋ ನಾರುಮಡಿ, ರಕ್ತಾಂಬರ.</verse>
				<verse number="23">ಆಕೆಯ ಪತಿಯು ಪಟ್ಟಣದಲ್ಲಿ ಸನ್ಮಾನಿತ. ದೇಶದ ಹಿರಿಯರ ಮಧ್ಯದಲ್ಲಿ ಪ್ರಸಿದ್ಧನಾಗಿ ಕುಳಿತಿರುವನು.</verse>
				<verse number="24">ಆಕೆಯು ನಯವಾದ ನಾರುಮಡಿಯನ್ನು ನೇಯ್ದು ಮಾರಾಟ ಮಾಡುತ್ತಾಳೆ. ಆಕೆಯು ನಡುಕಟ್ಟುಗಳನ್ನು ತಯಾರಿಸಿ ವರ್ತಕರಿಗೆ ಒದಗಿಸುತ್ತಾಳೆ.</verse>
				<verse number="25">ಆಕೆಯ ಉಡುಪು ಬಲವೂ ಘನತೆಯೂ ಆಗಿವೆ. ಭವಿಷ್ಯತ್ತಿನ ಭಯವಿಲ್ಲದೆ ಆಕೆಯು ನಗುವಳು.</verse>
				<verse number="26">ಆಕೆಯು ಜ್ಞಾನದಿಂದ ಮಾತನಾಡುತ್ತಾಳೆ. ಆಕೆಯ ನಾಲಿಗೆಯ ಮೇಲೆ ನಂಬಿಗಸ್ತ ಶಿಕ್ಷಣ ಇದೆ.</verse>
				<verse number="27">ಆಕೆಯು ತನ್ನ ಗೃಹಕೃತ್ಯಗಳನ್ನೆಲ್ಲಾ ಚೆನ್ನಾಗಿ ನೋಡಿಕೊಳ್ಳುತ್ತಾಳೆ. ಸೋಮಾರಿಯಾಗಿ ಕೆಲಸಮಾಡದೆ ಆಹಾರವನ್ನು ತಿನ್ನುವುದಿಲ್ಲ.</verse>
				<verse number="28">ಆಕೆಯ ಮಕ್ಕಳು ಎದ್ದು, ಆಕೆಯನ್ನು ಧನ್ಯಳೆಂದು ಕರೆಯುವರು. ಆಕೆಯ ಪತಿಯು ಸಹ ಆಕೆಯನ್ನು,</verse>
				<verse number="29">“ಬಹುಮಂದಿ ಸ್ತ್ರೀಯರು ಗುಣವತಿಯರಾಗಿದ್ದಾರೆ. ಆದರೆ ನೀನು ಅವರೆಲ್ಲರಿಗಿಂತಲೂ ಶ್ರೇಷ್ಠಳು,” ಎಂದು ಹೊಗಳುವನು.</verse>
				<verse number="30">ಸೌಂದರ್ಯವು ಮೋಸಕರವಾದದ್ದು, ಸೌಂದರ್ಯವು ಶಾಶ್ವತವಲ್ಲ. ಆದರೆ ಯೆಹೋವ ದೇವರಿಗೆ ಭಯಪಡುವವಳೇ ಪ್ರಶಂಸನೀಯಳು.</verse>
				<verse number="31">ಆಕೆಯ ಕೈಕೆಲಸಕ್ಕೆ ತಕ್ಕ ಪ್ರತಿಫಲವನ್ನು ಸಲ್ಲಿಸಿ ಗೌರವಿಸಿರಿ. ಪಟ್ಟಣದ ದ್ವಾರಗಳಲ್ಲಿ ಆಕೆಯ ಕಾರ್ಯಗಳು ಆಕೆಯನ್ನು ಹೊಗಳಲಿ.</verse>
			</chapter>
		</book>
		<book number="21">
			<chapter number="1">
				<verse number="1">ದಾವೀದನ ಮಗನೂ ಯೆರೂಸಲೇಮಿನ ಅರಸನೂ ಆದ ಪ್ರಸಂಗಿಯ ಮಾತುಗಳು:</verse>
				<verse number="2">“ವ್ಯರ್ಥಗಳಲ್ಲಿ ವ್ಯರ್ಥ! ವ್ಯರ್ಥಗಳಲ್ಲಿ ವ್ಯರ್ಥ!” ಎಂದು ಪ್ರಸಂಗಿ ಹೇಳುತ್ತಾನೆ. “ಸಮಸ್ತವೂ ವ್ಯರ್ಥ! ಎಲ್ಲವೂ ವ್ಯರ್ಥ.”</verse>
				<verse number="3">ಸೂರ್ಯನ ಕೆಳಗೆ ಮನುಷ್ಯನು ಪಡುವ ಎಲ್ಲಾ ಪ್ರಯಾಸಗಳಿಂದ ಅವನಿಗೆ ಲಾಭವೇನು?</verse>
				<verse number="4">ಸಂತತಿಗಳು ಬರುತ್ತವೆ, ಸಂತತಿಗಳು ಹೋಗುತ್ತವೆ; ಆದರೆ ಭೂಮಿಯು ಶಾಶ್ವತವಾಗಿ ಉಳಿಯುತ್ತದೆ.</verse>
				<verse number="5">ಸೂರ್ಯನು ಉದಯಿಸುತ್ತಾನೆ, ಸೂರ್ಯನು ಮುಳುಗುತ್ತಾನೆ. ತಾನು ಉದಯಿಸುವ ಸ್ಥಳಕ್ಕೆ ಆತುರದಿಂದ ಹಿಂದಿರುಗುತ್ತಾನೆ.</verse>
				<verse number="6">ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ. ಉತ್ತರದ ಕಡೆಗೆ ತಿರುಗುತ್ತದೆ. ಸುತ್ತುತ್ತಾ, ಸುತ್ತುತ್ತಾ ಹೋಗುತ್ತದೆ. ಆ ಗಾಳಿಯು ತನ್ನ ಸುತ್ತಳತೆಗಳ ಪ್ರಕಾರ ಹಿಂದಿರುಗುತ್ತದೆ.</verse>
				<verse number="7">ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತವೆ. ಆದರೂ ಸಮುದ್ರವು ತುಂಬುವುದಿಲ್ಲ. ನದಿಗಳು ಎಲ್ಲಿಂದ ಬಂದಿವೆಯೋ, ಆ ಸ್ಥಳಕ್ಕೆ ಅವು ಹಿಂದಿರುಗುತ್ತವೆ.</verse>
				<verse number="8">ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿವೆ. ಇದನ್ನು ಮನುಷ್ಯನು ವಿವರಿಸಲಾರನು. ನೋಡುವುದರಿಂದ ಕಣ್ಣು ತೃಪ್ತಿಗೊಳ್ಳದು, ಕೇಳುವುದರಿಂದ ಕಿವಿಯು ದಣಿಯದು.</verse>
				<verse number="9">ಇದ್ದದ್ದೇ ಇರುವುದು, ನಡೆದದ್ದೇ ನಡೆಯುವುದು. ಸೂರ್ಯನ ಕೆಳಗೆ ಹೊಸದಾದದ್ದು ಯಾವದೂ ಇಲ್ಲ.</verse>
				<verse number="10">“ನೋಡು, ಇದು ಹೊಸದು,” ಎಂದು ಯಾವ ವಿಷಯವಾಗಿ ಹೇಳಬಹುದೋ? ಅದು ನಮಗಿಂತ ಮುಂಚೆ ಇದ್ದದ್ದು, ಪುರಾತನ ಕಾಲದಿಂದ ಇದ್ದದ್ದೇ.</verse>
				<verse number="11">ಹಿಂದಿನ ಕಾಲದ ಜನರ ಜ್ಞಾಪಕವು ಈಗಿನವರಿಗಿಲ್ಲ. ಮುಂದಿನ ಕಾಲದಲ್ಲಿ ಬರುವವರ ಜ್ಞಾಪಕವು ಅವುಗಳ ಮುಂದಿನ ಕಾಲದ ಜನರಿಗೆ ಇರುವುದಿಲ್ಲ.</verse>
				<verse number="12">ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲರ ಮೇಲೆ ಅರಸನಾಗಿದ್ದೆ.</verse>
				<verse number="13">ಆಕಾಶದ ಕೆಳಗೆ ನಡೆಯುವ ಕೆಲಸಗಳನ್ನೆಲ್ಲಾ ಜ್ಞಾನದಿಂದ ವಿಚಾರಿಸಿ, ವಿಮರ್ಶಿಸುವುದಕ್ಕೆ ನಾನು ನನ್ನ ಮನಸ್ಸು ಮಾಡಿದೆ. ದೇವರು ಮಾನವರ ಮೇಲೆ ಈ ಕಷ್ಟಕರವಾದ ಪ್ರಯಾಸವನ್ನು ಹೊರಿಸಿದ್ದಾರೆ.</verse>
				<verse number="14">ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ. ಗಾಳಿಯನ್ನು ಹಿಂದಟ್ಟುವಂತೆ ಎಲ್ಲವೂ ವ್ಯರ್ಥ.</verse>
				<verse number="15">ವಕ್ರವಾದದ್ದನ್ನು ಸರಿಮಾಡುವುದಕ್ಕೆ ಆಗುವುದಿಲ್ಲ. ಇಲ್ಲದ್ದನ್ನು ಲೆಕ್ಕಿಸುವುದು ಅಸಾಧ್ಯ.</verse>
				<verse number="16">ನನ್ನಷ್ಟಕ್ಕೆ ನಾನೇ ಹೀಗೆಂದುಕೊಂಡೆನು, “ನೋಡು, ಯೆರೂಸಲೇಮಿನಲ್ಲಿ ನನಗಿಂತ ಮೊದಲು ಆಳಿದವರಿಗಿಂತ ನಾನು ಹೆಚ್ಚು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ಹಾಗೂ ತಿಳುವಳಿಕೆಯ ಅನುಭವ ನನಗಿದೆ.”</verse>
				<verse number="17">ಆಗ ಜ್ಞಾನವನ್ನೂ ಮನಗುಂದುವಿಕೆಯನ್ನೂ ಬುದ್ಧಿಹೀನತೆಯನ್ನೂ ತಿಳಿದುಕೊಳ್ಳುವಂತೆ ನಾನು ಮನಸ್ಸಿಟ್ಟೆನು, ಅದರ ಜೊತೆಗೆ ಇದು ಸಹ ಗಾಳಿಯನ್ನು ಬೆನ್ನಟ್ಟಿದಂತೆ, ಎಂದು ನಾನು ಅರಿತುಕೊಂಡೆನು.</verse>
				<verse number="18">ಏಕೆಂದರೆ ಬಹು ಜ್ಞಾನವಿದ್ದಲ್ಲಿ ಬಹು ಸಂಕಟ, ಹೆಚ್ಚು ತಿಳುವಳಿಕೆ ಇದ್ದಲ್ಲಿ ಹೆಚ್ಚು ವ್ಯಥೆ ಇದೆ.</verse>
			</chapter>
			<chapter number="2">
				<verse number="1">“ಈಗ ಬಾ, ಯಾವುದು ಒಳ್ಳೆಯದು ಎಂಬುದನ್ನು ಸುಖಭೋಗಗಳಿಂದ ನಿನ್ನನ್ನು ಪರೀಕ್ಷಿಸುವೆನು,” ಎಂದು ನನ್ನ ಮನಸ್ಸಿನಲ್ಲಿ ಹೇಳಿಕೊಂಡೆ. ಆದರೆ ಅದೂ ಕೂಡ ವ್ಯರ್ಥವಾದದ್ದೆಂದು ರುಜುವಾತಾಯಿತು.</verse>
				<verse number="2">“ನಗುವುದು ಮೂರ್ಖತನ, ಸುಖಭೋಗ ಏನನ್ನು ಸಾಧಿಸುತ್ತದೆ,” ಎಂದು ಹೇಳಿಕೊಂಡೆ.</verse>
				<verse number="3">ಆಕಾಶದ ಕೆಳಗೆ ಮನುಷ್ಯರು ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಹಿತ ಎಂದು ನಾನು ತಿಳಿದುಕೊಳ್ಳಲು ಬಯಸಿದೆ. ನನ್ನ ಮನಸ್ಸು ಇನ್ನೂ ಜ್ಞಾನದಿಂದಿರುವಾಗಲೇ ದ್ರಾಕ್ಷಾರಸದಿಂದ ಸಂತೋಷ ಪಡೋಣ, ಮೂರ್ಖತನವನ್ನು ಅಪ್ಪಿಕೊಳ್ಳೋಣ ಎಂದುಕೊಂಡೆ.</verse>
				<verse number="4">ನಾನು ಮಹಾ ಯೋಜನೆಗಳನ್ನು ನಡೆಸಿದೆನು: ನಾನು ನನಗಾಗಿ ಮನೆಗಳನ್ನು ಕಟ್ಟಿಸಿಕೊಂಡೆನು. ನಾನು ದ್ರಾಕ್ಷಿತೋಟಗಳನ್ನು ನೆಟ್ಟೆನು.</verse>
				<verse number="5">ನಾನು ಉದ್ಯಾನವನಗಳನ್ನೂ, ತೋಟಗಳನ್ನೂ ಮಾಡಿಕೊಂಡು, ಅವುಗಳಲ್ಲಿ ಸಕಲ ವಿಧವಾದ ಹಣ್ಣಿನ ವೃಕ್ಷಗಳನ್ನು ನೆಟ್ಟೆನು.</verse>
				<verse number="6">ಬೆಳೆಯುವ ಗಿಡಗಳ ತೋಪುಗಳಿಗೆ ನೀರು ಹಾಯಿಸುವುದಕ್ಕೆ ನಾನು ಜಲಾಶಯಗಳನ್ನು ಮಾಡಿಕೊಂಡೆನು.</verse>
				<verse number="7">ನನಗೆ ದಾಸ, ದಾಸಿಯರನ್ನು ಕೊಂಡುಕೊಂಡೆನು. ನನ್ನ ಮನೆಯಲ್ಲಿ ಜನಿಸಿದ ಇತರ ಗುಲಾಮರು ಸಹ ಇದ್ದರು. ನನಗಿಂತ ಮುಂಚೆ ಯೆರೂಸಲೇಮಿನಲ್ಲಿ, ಇದ್ದವರೆಲ್ಲರಿಗಿಂತಲೂ ಹೆಚ್ಚಾಗಿ ಬಹಳ ಸಂಪತ್ತು ಉಳ್ಳವನಾಗಿ ಹೆಚ್ಚು ದನಕುರಿಗಳ ಮಂದೆಗಳನ್ನು ಹೊಂದಿದೆನು.</verse>
				<verse number="8">ನಾನು ಬೆಳ್ಳಿಬಂಗಾರಗಳನ್ನು, ಅರಸರ ಮತ್ತು ಪ್ರಾಂತಗಳ ವಿಶೇಷ ಸಂಪತ್ತನ್ನು ಸಂಗ್ರಹಿಸಿಕೊಂಡೆನು. ಗಾಯಕ, ಗಾಯಕಿಯರನ್ನು ಮತ್ತು ಮನುಷ್ಯರಿಗೆ ಭೋಗವಿಲಾಸಕ್ಕಾಗಿ ಅನೇಕ ಉಪಪತ್ನಿಯರನ್ನು ಸಂಪಾದಿಸಿಕೊಂಡೆನು.</verse>
				<verse number="9">ಹೀಗೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದ ಎಲ್ಲರಿಗಿಂತಲೂ ನಾನು ಹೆಚ್ಚು ಅಭಿವೃದ್ಧಿಹೊಂದಿ, ಶ್ರೀಮಂತನಾದೆನು. ಇದೆಲ್ಲದರಲ್ಲಿ ನನ್ನ ಜ್ಞಾನವು ನನ್ನಲ್ಲಿ ನೆಲೆಯಾಗಿತ್ತು.</verse>
				<verse number="10">ನನ್ನ ಕಣ್ಣು ಬಯಸಿದ್ದೆಲ್ಲವನ್ನು ಅದರಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ. ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು. ಇದು ನನ್ನ ಎಲ್ಲಾ ಪ್ರಯಾಸದಿಂದ ನನಗೆ ಬಂದ ಬಹುಮಾನ.</verse>
				<verse number="11">ನನ್ನ ಕೈಗಳು ನಡೆಸಿದವುಗಳೆಲ್ಲವನ್ನೂ ನಾನು ಸಾಧಿಸಲು ಪ್ರಯಾಸಪಟ್ಟದ್ದನ್ನೂ ಪರಿಶೀಲಿಸಿ ನೋಡಿದೆ. ಗಾಳಿಯನ್ನು ಬೆನ್ನಟ್ಟಿದಂತೆ ಎಲ್ಲವೂ ವ್ಯರ್ಥವಾಗಿತ್ತು. ಸೂರ್ಯನ ಕೆಳಗೆ ಯಾವುದೂ ಲಾಭಕರವಾಗಿ ಕಾಣಲಿಲ್ಲ.</verse>
				<verse number="12">ಅನಂತರ ಜ್ಞಾನವನ್ನೂ ಮನಗುಂದುವಿಕೆಯನ್ನೂ ಮೂಡತೆಯನ್ನೂ ಮತ್ತೆ ಯೋಚಿಸುವುದಕ್ಕೆ ನಾನು ತಿರುಗಿಕೊಂಡೆನು. ಈಗಾಗಲೇ ಮಾಡಿದ್ದನ್ನು ಬಿಟ್ಟು, ಅರಸನ ತರುವಾಯ ಬರುವವನು ಹೊಸದಾಗಿ ಏನು ಮಾಡಬಲ್ಲನು?</verse>
				<verse number="13">ಆಗ ಬೆಳಕು ಕತ್ತಲೆಗಿಂತ ಶ್ರೇಷ್ಠವಾಗಿರುವಂತೆ, ಜ್ಞಾನವು ಮೂಢತನಕ್ಕಿಂತ ಶ್ರೇಷ್ಠವಾಗಿದೆ ಎಂದು ನಾನು ಕಂಡೆನು.</verse>
				<verse number="14">ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುತ್ತದೆ. ಆದರೆ ಮೂಢನು ಕತ್ತಲೆಯಲ್ಲಿ ನಡೆಯುತ್ತಾನೆ. ಇವರಿಬ್ಬರಿಗೂ ಒಂದೇ ಗತಿಯು ಸಂಭವಿಸುವುದೆಂದೂ ನಾನು ಗ್ರಹಿಸಿಕೊಂಡೆನು.</verse>
				<verse number="15">ಆಗ ನಾನು ನನ್ನ ಮನಸ್ಸಿನಲ್ಲಿ, “ಮೂಢನಿಗೆ ಸಂಭವಿಸುವ ಗತಿಯೂ ನನಗೂ ಸಂಭವಿಸುತ್ತದೆ. ನಾನು ಜ್ಞಾನಿಯಾಗುವುದರಿಂದ ಲಾಭವೇನು?” “ಇದು ಸಹ ವ್ಯರ್ಥವೇ,” ಎಂದುಕೊಂಡೆನು.</verse>
				<verse number="16">ಮೂಢನನ್ನು ಹೇಗೋ ಹಾಗೆಯೇ ಜ್ಞಾನಿಯನ್ನೂ ಜನರು ಬಹಳ ದಿನಗಳವರೆಗೆ ಜ್ಞಾಪಕಮಾಡಿಕೊಳ್ಳುವುದಿಲ್ಲ. ಇವರಿಬ್ಬರನ್ನೂ ಮರೆತುಹೋದ ದಿನಗಳು ಈಗಾಗಲೇ ಬಂದಿವೆ. ಮೂಢನಂತೆ ಜ್ಞಾನಿಯೂ ಸಹ ಸಾಯಲೇಬೇಕು.</verse>
				<verse number="17">ಸೂರ್ಯನ ಕೆಳಗೆ ನಡೆಯುವ ಕಾರ್ಯವು ನನಗೆ ದುಃಖಕರವಾಗಿ ತೋರಿತು. ಆದಕಾರಣ ನಾನು ನನ್ನ ಜೀವನವನ್ನು ಹಗೆ ಮಾಡಿದೆನು. ಗಾಳಿಯನ್ನು ಬೆನ್ನಟ್ಟುವಂತೆ ಎಲ್ಲವೂ ವ್ಯರ್ಥವಾಗಿದೆ.</verse>
				<verse number="18">ನನ್ನ ತರುವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕಾದ್ದರಿಂದ ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆ ಮಾಡಿದೆನು.</verse>
				<verse number="19">ನನ್ನ ನಂತರ ಬರುವವನು ಜ್ಞಾನಿಯೋ ಮೂಢನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ತೋರ್ಪಡಿಸಿಕೊಂಡದರ ಮೇಲೆಯೂ ಅವನು ಆಳುವನು. ಇದು ವ್ಯರ್ಥವೇ.</verse>
				<verse number="20">ಆದ್ದರಿಂದ ಸೂರ್ಯನ ಕೆಳಗೆ ಪ್ರಯಾಸಪಟ್ಟ ಎಲ್ಲಾ ಪ್ರಯಾಸದ ವಿಷಯವಾಗಿ, ನನ್ನ ಹೃದಯವು ನಿರಾಶೆಗೊಳ್ಳಲು ಪ್ರಾರಂಭಿಸಿತು.</verse>
				<verse number="21">ಒಬ್ಬ ಮನುಷ್ಯನು ಜ್ಞಾನದಲ್ಲಿಯೂ ತಿಳುವಳಿಕೆಯಲ್ಲಿಯೂ ಕೌಶಲಯುತವಾಗಿಯೂ ತನ್ನ ಕೆಲಸ ಮಾಡಬಹುದು. ಅನಂತರ ತನಗಿರುವುದೆಲ್ಲವನ್ನು ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡಬೇಕಾಗುತ್ತದೆ. ಇದೂ ವ್ಯರ್ಥವೂ ದೊಡ್ಡ ವ್ಯಸನವೂ ಆಗಿವೆ.</verse>
				<verse number="22">ಸೂರ್ಯನ ಕೆಳಗೆ ತಾನು ಪ್ರಯಾಸಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ?</verse>
				<verse number="23">ಅವನ ದಿನಗಳೆಲ್ಲಾ ವ್ಯಸನವೇ. ಅವನ ಪ್ರಯಾಸವು ದುಃಖವೇ. ರಾತ್ರಿಯಲ್ಲಿಯೂ ಅವನ ಮನಸ್ಸಿಗೆ ವಿಶ್ರಾಂತಿಯಿಲ್ಲ. ಇದೂ ಕೂಡ ವ್ಯರ್ಥವೇ.</verse>
				<verse number="24">ಒಬ್ಬ ವ್ಯಕ್ತಿ ತನ್ನ ಪ್ರಯಾಸದಲ್ಲಿ ತೃಪ್ತಿಹೊಂದುವಂತೆ ತಿಂದು ಕುಡಿಯುವುದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವುದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.</verse>
				<verse number="25">ದೇವರಿಲ್ಲದೆ ಯಾರಿಗೆ ಊಟ ದೊರಕಿತು? ದೇವರಿಲ್ಲದೆ ಯಾರು ಸುಖಾನುಭವ ಹೊಂದುವರು?</verse>
				<verse number="26">ಏಕೆಂದರೆ ದೇವರು ಮೆಚ್ಚಿದವರಿಗೆ ಅವರು ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾರೆ. ಆದರೆ ದೇವರು ತಮಗೆ ಮೆಚ್ಚುಗೆಯಾದವನಿಗೆ ಕೊಡತಕ್ಕ ಐಶ್ವರ್ಯವನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ಪಾಪಿಗೆ ಕೊಡುತ್ತಾರೆ. ಏಕೆಂದರೆ ಇದು ಸಹ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.</verse>
			</chapter>
			<chapter number="3">
				<verse number="1">ಪ್ರತಿಯೊಂದಕ್ಕೂ ಒಂದೊಂದು ಸಮಯವಿದೆ. ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ.</verse>
				<verse number="2">ಹುಟ್ಟುವುದಕ್ಕೆ ಒಂದು ಸಮಯ, ಸಾಯುವುದಕ್ಕೆ ಒಂದು ಸಮಯ. ನೆಡುವುದಕ್ಕೆ ಒಂದು ಸಮಯ, ನೆಟ್ಟದ್ದನ್ನು ಕಿತ್ತು ಹಾಕುವುದಕ್ಕೆ ಒಂದು ಸಮಯ.</verse>
				<verse number="3">ಕೊಲ್ಲುವುದಕ್ಕೆ ಒಂದು ಸಮಯ, ಸ್ವಸ್ಥ ಮಾಡುವುದಕ್ಕೆ ಒಂದು ಸಮಯ, ಕೆಡವಿಬಿಡುವುದಕ್ಕೆ ಒಂದು ಸಮಯ, ಕಟ್ಟುವುದಕ್ಕೆ ಒಂದು ಸಮಯ.</verse>
				<verse number="4">ಅಳುವುದಕ್ಕೆ ಒಂದು ಸಮಯ, ನಗುವುದಕ್ಕೆ ಒಂದು ಸಮಯ. ಗೋಳಾಡುವುದಕ್ಕೆ ಒಂದು ಸಮಯ, ಕುಣಿದಾಡುವುದಕ್ಕೆ ಒಂದು ಸಮಯ.</verse>
				<verse number="5">ಕಲ್ಲುಗಳನ್ನು ಎಸೆಯುವುದಕ್ಕೆ ಒಂದು ಸಮಯ, ಕಲ್ಲುಗಳನ್ನು ಕೂಡಿಸುವುದಕ್ಕೆ ಒಂದು ಸಮಯ. ಅಪ್ಪಿಕೊಳ್ಳುವುದಕ್ಕೆ ಒಂದು ಸಮಯ, ತಡೆದಿರುವುದಕ್ಕೂ ಒಂದು ಸಮಯ.</verse>
				<verse number="6">ಗಳಿಸುವುದಕ್ಕೆ ಒಂದು ಸಮಯ, ಕಳೆದುಕೊಳ್ಳುವುದಕ್ಕೆ ಒಂದು ಸಮಯ. ಕಾಪಾಡುವುದಕ್ಕೆ ಒಂದು ಸಮಯ, ಬಿಸಾಡುವುದಕ್ಕೆ ಒಂದು ಸಮಯ.</verse>
				<verse number="7">ಹರಿಯುವುದಕ್ಕೆ ಒಂದು ಸಮಯ, ಹೊಲಿಯುವುದಕ್ಕೆ ಒಂದು ಸಮಯ. ಸುಮ್ಮನೆ ಇರುವುದಕ್ಕೆ ಒಂದು ಸಮಯ, ಮಾತಾಡುವುದಕ್ಕೆ ಒಂದು ಸಮಯ.</verse>
				<verse number="8">ಪ್ರೀತಿಸುವುದಕ್ಕೆ ಒಂದು ಸಮಯ, ದ್ವೇಷಿಸುವುದಕ್ಕೆ ಒಂದು ಸಮಯ. ಯುದ್ಧದ ಸಮಯ, ಸಮಾಧಾನದ ಸಮಯ, ಹೀಗೆ ಒಂದೊಂದಕ್ಕೂ ತಕ್ಕ ಸಮಯವಿದೆ.</verse>
				<verse number="9">ಹಾಗಾದರೆ, ಪ್ರಯಾಸ ಪಡುವುದರಲ್ಲಿ ದುಡಿಯುವವನಿಗೆ ಲಾಭವೇನಿದೆ?</verse>
				<verse number="10">ದೇವರು ಮಾನವ ಜನಾಂಗದ ಮೇಲೆ ಹೊರಿಸಿರುವ ಭಾರವನ್ನು ನಾನು ನೋಡಿದ್ದೇನೆ.</verse>
				<verse number="11">ದೇವರು ಪ್ರತಿಯೊಂದನ್ನು ತಮ್ಮ ಸೂಕ್ತ ಸಮಯದಲ್ಲಿ ಸುಂದರವಾಗಿ ನಿರ್ಮಿಸಿದ್ದಾರೆ. ಜನರ ಹೃದಯದಲ್ಲಿ ನಿತ್ಯತೆಯನ್ನು ದೇವರೇ ಇಟ್ಟಿದ್ದಾರೆ. ಆದರೂ ಆದಿಯಿಂದ ಅಂತ್ಯದವರೆಗೂ ದೇವರು ಏನು ಮಾಡಿದ್ದಾರೆಂದು ಯಾರಿಗೂ ಗ್ರಹಿಸಲು ಸಾಧ್ಯವಿಲ್ಲ.</verse>
				<verse number="12">ಜನರು ತಮ್ಮ ಜೀವಮಾನದಲ್ಲಿ ಸಂತೋಷವಾಗಿದ್ದು ಒಳ್ಳೆಯದನ್ನು ಮಾಡುವುದಕ್ಕಿಂತ ಉತ್ತಮವಾದದ್ದೇನೂ ಇಲ್ಲವೆಂದು ನಾನು ಬಲ್ಲೆನು.</verse>
				<verse number="13">ಇದಲ್ಲದೆ ಪ್ರತಿಯೊಬ್ಬನು ಅನ್ನಪಾನಗಳನ್ನು ಸೇವಿಸಿ, ತನ್ನ ಎಲ್ಲಾ ಪ್ರಯಾಸಗಳಲ್ಲಿ ಸುಖವನ್ನು ಅನುಭವಿಸುವುದು ದೇವರ ದಾನದಿಂದಲೇ.</verse>
				<verse number="14">ದೇವರು ಮಾಡುವ ಕಾರ್ಯವೆಲ್ಲವೂ ಶಾಶ್ವತವಾಗಿರುವುದೆಂದು ನಾನು ಬಲ್ಲೆನು; ಅದಕ್ಕೆ ಯಾವುದನ್ನೂ ಕೂಡಿಸಲಾಗದು ಮತ್ತು ಯಾವುದನ್ನೂ ತೆಗೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮನುಷ್ಯರು ಭಯಭಕ್ತಿಯಿಂದ ಜೀವಿಸಬೇಕೆಂದು ದೇವರು ಇದನ್ನು ಮಾಡಿದ್ದಾರೆ.</verse>
				<verse number="15">ಇರುವಂಥದ್ದು ಈಗಾಗಲೇ ಇತ್ತು, ಬರುವಂಥದ್ದು ಆಗಲೇ ಇದೆ. ಗತಿಸಿಹೋದದ್ದನ್ನು ದೇವರು ಪುನಃಸ್ಥಾಪಿಸುವರು.</verse>
				<verse number="16">ಇದಕ್ಕಿಂತಲೂ ಬೇರೆಯಾದದ್ದನ್ನು ಸೂರ್ಯನ ಕೆಳಗೆ ನೋಡಿದೆನು: ನ್ಯಾಯತೀರ್ಪಿನ ಸ್ಥಳದಲ್ಲಿ ದುಷ್ಕೃತ್ಯ ಇತ್ತು. ನೀತಿಯ ಸ್ಥಾನದಲ್ಲಿಯೂ ದುಷ್ಟತ್ವ ಇತ್ತು.</verse>
				<verse number="17">ನಾನು ನನ್ನ ಹೃದಯದಲ್ಲಿ ಹೀಗೆ ಅಂದುಕೊಂಡೆನು, “ನೀತಿವಂತರನ್ನೂ ದುಷ್ಟರನ್ನೂ ದೇವರು ನ್ಯಾಯತೀರಿಸುವನು. ಏಕೆಂದರೆ ಪ್ರತಿಯೊಂದು ಉದ್ದೇಶಕ್ಕೂ, ಪ್ರತಿಯೊಂದು ಕೆಲಸಕ್ಕೂ ಪರೀಕ್ಷೆಯ ಸಮಯವಿದೆ.”</verse>
				<verse number="18">ಮತ್ತೆ ನನ್ನ ಮನಸ್ಸಿನಲ್ಲಿ ಯೋಚಿಸಿದೆ, “ಮನುಷ್ಯರು ಮೃಗಗಳಂತೆ ಇದ್ದಾರೆಂದು ತಿಳಿದುಕೊಳ್ಳಲು ದೇವರು ಅವರನ್ನು ಪರೀಕ್ಷಿಸುತ್ತಾರೆ.</verse>
				<verse number="19">ಏಕೆಂದರೆ ಮೃಗಗಳಿಗೆ ಸಂಭವಿಸುವುದು ಮನುಷ್ಯರಿಗೂ ಸಂಭವಿಸುತ್ತದೆ. ಇಬ್ಬರಿಗೂ ಒಂದೇ ಸಂಗತಿ ಸಂಭವಿಸುತ್ತದೆ. ಒಂದು ಹೇಗೆ ಸಾಯುತ್ತದೋ ಹಾಗೆ ಇನ್ನೊಂದೂ ಸಾಯುತ್ತದೆ. ಎಲ್ಲಕ್ಕೂ ಒಂದೇ ಪ್ರಾಣ ಇದೆ. ಆ ರೀತಿಯಲ್ಲಿ ಮೃಗಕ್ಕಿಂತ ಮನುಷ್ಯನಿಗೆ ಹೆಚ್ಚು ಶ್ರೇಷ್ಠತೆ ಇಲ್ಲ. ಎಲ್ಲವೂ ವ್ಯರ್ಥ.</verse>
				<verse number="20">ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ. ಎಲ್ಲವೂ ಮಣ್ಣಿನಿಂದ ಆದವು. ಎಲ್ಲವೂ ಮಣ್ಣಿಗೆ ಸೇರುತ್ತವೆ.</verse>
				<verse number="21">ಮನುಷ್ಯನ ಆತ್ಮವು ಮೇಲಕ್ಕೆ ಹೋಗುತ್ತದೆ ಎಂದೂ ಮೃಗದ ಪ್ರಾಣವು ಭೂಮಿಯ ಕೆಳಗೆ ಹೋಗುತ್ತದೆಂದೂ ಯಾರು ತಿಳಿದಾರು?”</verse>
				<verse number="22">ಆದಕಾರಣ ಮನುಷ್ಯನು ತನ್ನ ಕೆಲಸ ಕಾರ್ಯಗಳಲ್ಲಿ ಆನಂದಿಸುವುದಕ್ಕಿಂತ ಉತ್ತಮವಾದದ್ದು ಯಾವುದೂ ಇಲ್ಲವೆಂದು ನಾನು ನೋಡಿದೆನು. ಏಕೆಂದರೆ ಇದೇ ಅವನ ಪಾಲು. ಆದ್ದರಿಂದ ತನ್ನ ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?</verse>
			</chapter>
			<chapter number="4">
				<verse number="1">ಪುನಃ ನಾನು ಸೂರ್ಯನ ಕೆಳಗೆ ನಡೆಯುತ್ತಿರುವ ದಬ್ಬಾಳಿಕೆಯನ್ನೆಲ್ಲಾ ನೋಡಿದೆನು: ಹಿಂಸೆಗೊಂಡವರ ಕಣ್ಣೀರನ್ನೂ, ಅವರನ್ನು ಸಂತೈಸುವವರು ಯಾರೂ ಇಲ್ಲದಿರುವುದನ್ನೂ ನೋಡಿದೆನು. ಅಧಿಕಾರವು ಅವರ ದಬ್ಬಾಳಿಕೆಗಾರರ ಬಳಿಯಲ್ಲಿತ್ತು. ಆದರೆ ಅವರನ್ನು ಸಂತೈಸುವವರು ಒಬ್ಬರೂ ಇಲ್ಲ.</verse>
				<verse number="2">ಆದಕಾರಣ ನಾನು ಇದನ್ನು ನೋಡಿ ಜೀವದಿಂದ ಇರುವವರಿಗಿಂತ, ಮೃತಪಟ್ಟವರೇ ಮೇಲು ಎಂದು ನಾನು ತೀರ್ಮಾನಿಸಿದೆ.</verse>
				<verse number="3">ಆದರೆ ಇವರಿಬ್ಬರಿಗಿಂತಲೂ ಇನ್ನೂ ಹುಟ್ಟದೇ, ಸೂರ್ಯನ ಕೆಳಗೆ ನಡೆಯುವ ಕೆಟ್ಟ ಕೃತ್ಯವನ್ನು ನೋಡದಿರುವವನೇ ಶ್ರೇಷ್ಠನು.</verse>
				<verse number="4">ಮನುಷ್ಯನು ಪಡುವ ಎಲ್ಲಾ ಪ್ರಯಾಸವನ್ನೂ ಸಾಧಿಸುವ ಎಲ್ಲಾ ಕಾರ್ಯಗಳನ್ನೂ ನೋಡಿದಾಗ ಇವು ಪರಸ್ಪರ ಮತ್ಸರಕ್ಕೆ ಕಾರಣವೆಂದು ನಾನು ತಿಳಿದುಕೊಂಡೆನು. ಇದು ಕೂಡ ಗಾಳಿಯನ್ನು ಬೆನ್ನಟ್ಟಿದ ಹಾಗೆ ವ್ಯರ್ಥವೇ.</verse>
				<verse number="5">ಸುಮ್ಮನೇ ಕೈಕಟ್ಟಿ ಕುಳಿತುಕೊಂಡು ಬುದ್ಧಿಹೀನರು, ತಮ್ಮನ್ನು ತಾವೇ ಹಾಳುಮಾಡಿಕೊಳ್ಳುತ್ತಾರೆ.</verse>
				<verse number="6">ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಪ್ರಯಾಸದಿಂದ ತುಂಬಿದ ಎರಡು ಕೈಗಳಿಂದ ಮಾಡಿದ ಕೆಲಸಕ್ಕಿಂತ ನೆಮ್ಮದಿಯಿಂದ ಒಂದು ಕೈಯಿಂದ ಮಾಡಿದ ಕೆಲಸವೇ ಲೇಸು.</verse>
				<verse number="7">ಆಗ ಮತ್ತೆ ನಾನು ಸೂರ್ಯನ ಕೆಳಗೆ ವ್ಯರ್ಥವಾದದ್ಡನ್ನು ಕಂಡೆನು:</verse>
				<verse number="8">ಜೊತೆಗಾರನಿಲ್ಲದೆ ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದನು. ಅವನಿಗೆ ಮಗನಾಗಲಿ, ಸಹೋದರನಾಗಲಿ ಇರಲಿಲ್ಲ. ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ತನ್ನ ಸಂಪತ್ತಿನಿಂದ ಅವನ ಕಣ್ಣು ತೃಪ್ತಿ ಹೊಂದಿರಲಿಲ್ಲ. ಅವನು, “ನಾನು ಸುಖಸಂತೋಷವನ್ನು ತೊರೆದು, ಯಾರಿಗೋಸ್ಕರ ಕಷ್ಟಪಡುತ್ತಲೇ ಇದ್ದೇನೆ?” ಎಂದುಕೊಂಡನು. ಇದು ಕೂಡ ವ್ಯರ್ಥವೇ, ಪ್ರಯಾಸದ ಕೆಲಸವೇ ಸರಿ.</verse>
				<verse number="9">ಒಬ್ಬನಿಗಿಂತ ಇಬ್ಬರು ಲೇಸು, ಏಕೆಂದರೆ ಅವರ ಪ್ರಯಾಸಕ್ಕೆ ಒಳ್ಳೆಯ ಪ್ರತಿಫಲವಿದೆ:</verse>
				<verse number="10">ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುವನು. ಆದರೆ ಅವನು ಒಬ್ಬೊಂಟಿಗನಾಗಿ ಬಿದ್ದರೆ ಅವನ ಗತಿ ದುರ್ಗತಿಯೇ ಏಕೆಂದರೆ ಅವನಿಗೆ ಸಹಾಯ ಮಾಡುವುದಕ್ಕೆ ಯಾರೂ ಇರುವುದಿಲ್ಲ.</verse>
				<verse number="11">ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ. ಆದರೆ ಒಬ್ಬನಷ್ಟೆ ಹೇಗೆ ಬೆಚ್ಚಗಿರುತ್ತಾನೆ?</verse>
				<verse number="12">ಒಬ್ಬಂಟಿಗನ ಮೇಲೆ ಜಯ ಸಾಧಿಸಲು, ಇಬ್ಬರು ಎದುರಾಗಿ ನಿಲ್ಲಬಹುದು. ಆದರೆ ಮೂರು ಹುರಿಯ ಹಗ್ಗವು ಬೇಗನೆ ಕಿತ್ತು ಹೋಗುವುದಿಲ್ಲ.</verse>
				<verse number="13">ಬುದ್ಧಿಯ ಹೇಳಿಕೆಗೆ ಕಿವಿಗೊಡದ ಮೂಢ ಮುದಿ ಅರಸನಿಗಿಂತ ಬಡವನಾದರೂ ಜ್ಞಾನಿಯಾದ ಒಬ್ಬ ಯುವಕನೇ ಮೇಲು.</verse>
				<verse number="14">ಆ ಯುವಕನು ಸೆರೆಮನೆಯಿಂದ ರಾಜ್ಯವನ್ನಾಳುವುದಕ್ಕಾಗಿ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು.</verse>
				<verse number="15">ಸೂರ್ಯನ ಕೆಳಗೆ ಜೀವಿಸಿ ನಡೆದಾಡಿದವರೆಲ್ಲರೂ ಅರಸನ ಪ್ರತಿಯಾಗಿ ಯುವಕನನ್ನು ಹಿಂಬಾಲಿಸಿದ್ದನ್ನೂ ನಾನು ನೋಡಿದೆನು.</verse>
				<verse number="16">ಇವನ ಆಧಿಪತ್ಯಕ್ಕೆ ಒಳಪಟ್ಟ ಜನರ ಸಂಖ್ಯೆಯು ಅಪಾರ. ಆದರೆ ಯುವಕನ ಆಳ್ವಿಕೆಯ ಮುಂಚೆ ಇದ್ದವರು ಮತ್ತು ತರುವಾಯ ಬಂದವರು ಇವನನ್ನು ಮೆಚ್ಚಲಿಲ್ಲ. ಇದು ಸಹ ಗಾಳಿಯನ್ನು ಬೆನ್ನಟ್ಟಿದಂತೆ ವ್ಯರ್ಥವೇ.</verse>
			</chapter>
			<chapter number="5">
				<verse number="1">ದೇವರ ಆಲಯಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂರ್ಖರು ಅರ್ಪಿಸುವ ಯಜ್ಞಕ್ಕಿಂತ, ದೇವರ ಸಮೀಪವಾಗಿದ್ದು ಅವರಿಗೆ ಕಿವಿಗೊಟ್ಟು ಆಲಿಸುವುದು ಲೇಸು. ತಾವು ತಪ್ಪು ಮಾಡುತ್ತಿದ್ದಾರೆಂದು ಮೂಢರಿಗೆ ತಿಳಿಯುವುದಿಲ್ಲ.</verse>
				<verse number="2">ನೀನು ದುಡುಕಿ ಮಾತನಾಡಬೇಡ, ದೇವರ ಮುಂದೆ ಮಾತನಾಡಲು ನಿನ್ನ ಹೃದಯವು ಆತುರಪಡದೇ ಇರಲಿ. ದೇವರು ಪರಲೋಕದಲ್ಲಿದ್ದಾರೆ. ನೀನಾದರೋ ಭೂಮಿಯ ಮೇಲೆ ಇರುವೆ, ಆದಕಾರಣ ನಿನ್ನ ಮಾತುಗಳು ಕೊಂಚವಾಗಿರಲಿ.</verse>
				<verse number="3">ಬಹಳ ಚಿಂತೆ ಇದ್ದಾಗಲೂ ಕನಸು ಬರುತ್ತದೆ. ಮೂಢನು ಮಾತಾಡಿದರೆ ಸಾಕು, ಬಹು ಮಾತುಗಳು ಬರುತ್ತವೆ.</verse>
				<verse number="4">ದೇವರಿಗೆ ನೀನು ಹರಕೆಯನ್ನು ಮಾಡಿದರೆ, ಅದನ್ನು ತೀರಿಸಲು ತಡಮಾಡಬೇಡ. ದೇವರು ಮೂಢರನ್ನು ಮೆಚ್ಚುವುದಿಲ್ಲ. ನೀನು ಹರಕೆ ಮಾಡಿದ್ದನ್ನು ತೀರಿಸು.</verse>
				<verse number="5">ಹರಕೆಮಾಡಿ ತೀರಿಸದೆ ಇರುವುದಕ್ಕಿಂತ, ಹರಕೆ ಮಾಡದೆ ಇರುವುದು ಒಳ್ಳೆಯದು.</verse>
				<verse number="6">ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ನಡೆಸದಂತೆ ನೋಡಿಕೋ. “ನಾನು ಹರಕೆ ಮಾಡಿದ್ದು ತಪ್ಪು,” ಎಂದು ದೂತನ ಮುಂದೆ ಹೇಳಬೇಡ. ಇದರಿಂದ ದೇವರು ನಿನ್ನ ಮಾತಿಗೆ ಮೆಚ್ಚದೆ, ನಿನ್ನನ್ನು ಏಕೆ ದಂಡಿಸಬೇಕು?</verse>
				<verse number="7">ಬಹು ಕನಸುಗಳೂ ಬಹು ಮಾತುಗಳೂ ವ್ಯರ್ಥವಾದವುಗಳು. ಆದ್ದರಿಂದ ನೀನು ದೇವರಿಗೆ ಭಯಪಡು.</verse>
				<verse number="8">ದೇಶದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯ ನಿರಾಕರಿಸಿದ್ದನ್ನೂ ನೀನು ನೋಡಿದರೆ, ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಮತ್ತೊಬ್ಬ ಉನ್ನತ ಅಧಿಕಾರಿಗಳು ಇದ್ದಾರೆ.</verse>
				<verse number="9">ಭೂಮಿಯಿಂದ ಲಾಭವು ಎಲ್ಲರಿಗೂ ಇದೆ. ಹೊಲಗದ್ದೆಗಳಿಂದ ಅರಸನಿಗೂ ಲಾಭವಿದೆ.</verse>
				<verse number="10">ಹಣವನ್ನು ಪ್ರೀತಿಸುವವರಿಗೆ ಎಷ್ಟು ಹಣ ಇದ್ದರೂ ಸಾಕಾಗದು. ಆಸ್ತಿಯನ್ನು ಪ್ರೀತಿಸುವವನು ತನ್ನ ಆದಾಯದಿಂದ ತೃಪ್ತಿಗೊಳ್ಳುವುದಿಲ್ಲ. ಇದೂ ಸಹ ವ್ಯರ್ಥವೇ.</verse>
				<verse number="11">ಸೊತ್ತು ಹೆಚ್ಚಿದರೆ, ಅದನ್ನು ಅನುಭವಿಸುವವರು ಹೆಚ್ಚಾಗುವರು. ಯಜಮಾನರು ಅದನ್ನು ತಮ್ಮ ಕಣ್ಣಿಂದ ನೋಡುವುದೇ ಅವರಿಗಾಗುವ ಲಾಭ, ಬೇರೆ ಯಾವ ಪ್ರಯೋಜನವಿದೆ?</verse>
				<verse number="12">ಪ್ರಯಾಸ ಪಡುವವನು ಸ್ವಲ್ಪ ತಿಂದರೂ ಹೆಚ್ಚು ತಿಂದರೂ ಅವನು ಹಾಯಾಗಿ ನಿದ್ರಿಸುತ್ತಾನೆ. ಆದರೆ ಐಶ್ವರ್ಯವಂತನ ಸಮೃದ್ಧಿಯು ಅವನನ್ನು ನಿದ್ರೆ ಮಾಡಗೊಡಿಸದು.</verse>
				<verse number="13">ಸೂರ್ಯನ ಕೆಳಗೆ ವ್ಯಸನಕರವಾದ ಕೇಡನ್ನು ನಾನು ನೋಡಿದೆ. ಅದು ಯಾವುದೆಂದರೆ: ಸಂಗ್ರಹಿಸಿದ ಆಸ್ತಿ ಯಜಮಾನನಿಗೆ ಹಾನಿ.</verse>
				<verse number="14">ಅದು ಹೇಗೆಂದರೆ, ಅನಾಹುತದಿಂದ ಆಸ್ತಿ ಕಳೆದುಹೋಗುತ್ತದೆ. ಅವನಿಗೆ ಮಗನಿದ್ದರೆ, ಅವನಿಗೆ ಏನೂ ಇರುವುದಿಲ್ಲ.</verse>
				<verse number="15">ತಾಯಿಯ ಗರ್ಭದಿಂದ ಅವನು ಹೇಗೆ ಬರಿಗೈಯಲ್ಲಿ ಬಂದನೋ, ಹಾಗೆ ಬರಿಗೈಯಲ್ಲಿ ಗತಿಸಿ ಹೋಗುವನು. ಅವನು ಪ್ರಯಾಸ ಪಟ್ಟದ್ದಕ್ಕಾಗಿ ಯಾವುದನ್ನು ತೆಗೆದುಕೊಂಡು ಹೋಗುವುದಿಲ್ಲ.</verse>
				<verse number="16">ಇದು ಕೂಡ ವ್ಯಸನಕರವಾದ ಕೇಡು: ಮನುಷ್ಯನು ಹೇಗೆ ಬಂದನೋ, ಹಾಗೆಯೇ ಹೋಗುವನು. ಗಾಳಿಗಾಗಿ ಪ್ರಯಾಸಪಟ್ಟವನಿಗೆ ಲಾಭವೇನಿದೆ?</verse>
				<verse number="17">ತನ್ನ ಜೀವಮಾನವೆಲ್ಲಾ ಅವನು ಕತ್ತಲೆಯಲ್ಲಿ ಕಳೆಯುತ್ತಾನೆ. ಅವನಿಗೆ ವ್ಯಾಧಿಯೊಂದಿಗೆ ಬಹಳ ವ್ಯಥೆಯೂ ಕ್ರೋಧವೂ ಇರುತ್ತದೆ.</verse>
				<verse number="18">ದೇವರು ಮನುಷ್ಯನಿಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ಅವನು ಕೈಗೊಂಡ ಪ್ರಯಾಸದ ಸುಖವನ್ನು ಅನುಭವಿಸಿ, ತಿಂದು, ಕುಡಿಯುವುದು ತೃಪ್ತಿಕರವಾದದ್ದೂ ಆಗಿದೆ, ಎಂದು ಒಂದು ಒಳ್ಳೆಯದನ್ನು ಕಂಡುಕೊಂಡೆನು. ಏಕೆಂದರೆ ಇದು ಮನುಷ್ಯನ ಪಾಲು.</verse>
				<verse number="19">ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅವುಗಳನ್ನು ಅನುಭವಿಸುವುದಕ್ಕೆ ಸಾಮರ್ಥ್ಯ ಕೊಟ್ಟಿದ್ದರೆ, ಅವನು ತನ್ನ ಪಾಲನ್ನು ತೆಗೆದುಕೊಂಡು, ತನ್ನ ಪ್ರಯಾಸದಲ್ಲಿ ಆನಂದಿಸುವುದೂ ದೇವರ ದಾನದಿಂದಲೇ.</verse>
				<verse number="20">ಇಂಥವನು ತನ್ನ ಜೀವಮಾನದ ದಿನಗಳನ್ನು ಗಣನೆಗೆ ತಂದುಕೊಳ್ಳನು. ಏಕೆಂದರೆ ಇವನು ತನ್ನ ಹೃದಯಾನಂದದಲ್ಲಿ ಮಗ್ನನಾಗಿರುವಂತೆ ದೇವರು ಮಾಡಿದ್ದಾರೆ.</verse>
			</chapter>
			<chapter number="6">
				<verse number="1">ಸೂರ್ಯನ ಕೆಳಗೆ ಇರುವ ಇನ್ನೊಂದು ಕೇಡನ್ನು ಕಂಡೆನು, ಅದು ಮನುಷ್ಯರ ಮೇಲೆ ಬಹು ಭಾರವಾಗಿದೆ.</verse>
				<verse number="2">ಅದೇನೆಂದರೆ, ಮನುಷ್ಯನು ಹೃದಯದಲ್ಲಿ ಬಯಸಿದ್ದನ್ನು ಕೊರತೆಯಾಗದಂತೆ ದೇವರು ಅವನಿಗೆ ಧನ, ಐಶ್ವರ್ಯ, ಸನ್ಮಾನವನ್ನು ಕೊಡುತ್ತಾರೆ. ಆದರೆ ಅದನ್ನು ಅನುಭವಿಸುವಂತೆ ದೇವರು ಸಾಮರ್ಥ್ಯವನ್ನು ಕೊಡುವುದಿಲ್ಲ. ಆದುದರಿಂದ ಪರರು ಅದನ್ನು ಅನುಭವಿಸುತ್ತಾರೆ. ಇದು ವ್ಯರ್ಥವೂ ವ್ಯಸನಕರವಾದ ಕೇಡು.</verse>
				<verse number="3">ಒಬ್ಬ ಮನುಷ್ಯನಿಗೆ ನೂರು ಮಕ್ಕಳಿರಬಹುದು ಮತ್ತು ಅವನು ಬಹಳ ವರ್ಷ ಬದುಕಿರಬಹುದು. ಅವನು ತನ್ನ ಐಶ್ವರ್ಯವನ್ನು ಅನುಭವಿಸದೆ, ಸರಿಯಾದ ಶವಸಂಸ್ಕಾರ ಇಲ್ಲದೆ ಹೋದರೆ ಅವನಿಗಿಂತಲೂ ಮೃತ ಸ್ಧಿತಿಯಲ್ಲಿ ಹುಟ್ಟಿರುವ ಕೂಸೇ ಮೇಲು ಎಂದುಕೊಂಡೆ.</verse>
				<verse number="4">ಆ ಕೂಸು ವ್ಯರ್ಥವಾಗಿ ಬಂದು ಕತ್ತಲೆಯಲ್ಲಿ ಹೊರಟು ಹೋಗುತ್ತದೆ. ಅದರ ಹೆಸರು ಅಂಧಕಾರದಿಂದ ಕವಿದಿರುವುದು.</verse>
				<verse number="5">ಇದಲ್ಲದೆ ಅದು ಸೂರ್ಯನನ್ನು ನೋಡಲಿಲ್ಲ, ಯಾವುದನ್ನು ಅರಿತಿರಲಿಲ್ಲ. ಆದರೂ ಅದು ಆ ಮನುಷ್ಯನಿಗಿಂತ ಹೆಚ್ಚು ವಿಶ್ರಾಂತಿ ಹೊಂದಿದೆ.</verse>
				<verse number="6">ಒಂದು ವೇಳೆ ಎರಡು ಸಾವಿರ ವರ್ಷಗಳು ಆ ಮನುಷ್ಯನು ಬದುಕಿದರೂ ಅವನು ತನ್ನ ಐಶ್ವರ್ಯವನ್ನು ಅನುಭವಿಸದಿದ್ದರೆ ಏನು ಪ್ರಯೋಜನ? ಎಲ್ಲರೂ ಒಂದೇ ಸ್ಥಳಕ್ಕೆ ಹೋಗುತ್ತಾರಲ್ಲವೇ?</verse>
				<verse number="7">ಪ್ರತಿಯೊಬ್ಬನ ಪ್ರಯಾಸ ಅವನ ಹೊಟ್ಟೆಗಾಗಿಯೇ, ಆದರೆ ಅವನ ಹಸಿವು ತೃಪ್ತಿಹೊಂದುವುದಿಲ್ಲ.</verse>
				<verse number="8">ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಲಾಭ ಏನಿದೆ? ಇತರರ ಮುಂದೆ ಹೇಗೆ ವರ್ತಿಸಬೇಕು ಎಂದು ತಿಳಿದುಕೊಳ್ಳುವುದರಿಂದ ಬಡವರಿಗೇನು ಲಾಭ?</verse>
				<verse number="9">ಹೆಚ್ಚು ಅಪೇಕ್ಷಿಸಿ ಅಲೆದಾಡುವುದಕ್ಕಿಂತ ಕಣ್ಣೆದುರಿಗೆ ಇರುವುದನ್ನು ಅನುಭವಿಸುವುದು ಉತ್ತಮ. ಗಾಳಿಯನ್ನು ಬೆನ್ನಟ್ಟಿದಂತೆ ಇದೂ ಕೂಡ ವ್ಯರ್ಥವೇ.</verse>
				<verse number="10">ಜಗತ್ತಿನಲ್ಲಿ ಇರುವ ಎಲ್ಲದಕ್ಕೂ ಈಗಾಗಲೇ ಹೆಸರನ್ನು ಇಡಲಾಗಿದೆ. ಮನುಷ್ಯನು ಯಾರು ಎಂದೂ ಗೊತ್ತಾಗಿದೆ. ತನಗಿಂತ ಬಲಿಷ್ಟನೊಂದಿಗೆ ಯಾರೂ ಹೋರಾಡುವುದಿಲ್ಲ.</verse>
				<verse number="11">ಮಾತು ಹೆಚ್ಚಿದಷ್ಟೂ, ಕಡಿಮೆ ಅರ್ಥೈಸುತ್ತವೆ, ಅದರಿಂದ ಯಾರಿಗೆ ಏನು ಲಾಭ?</verse>
				<verse number="12">ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ಎಲ್ಲಾ ದಿವಸಗಳಲ್ಲಿ ಅವನಿಗೆ ಯಾವುದು ಒಳ್ಳೆಯದೆಂದು ಯಾರಿಗೆ ಗೊತ್ತು? ಅವನು ಹೊರಟುಹೋದ ಮೇಲೆ ಸೂರ್ಯನ ಕೆಳಗೆ ಏನಾಗುತ್ತದೆಂದು ಅವನಿಗೆ ಯಾರು ಹೇಳಬಲ್ಲರು?</verse>
			</chapter>
			<chapter number="7">
				<verse number="1">ಅಮೂಲ್ಯವಾದ ಸುಗಂಧ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ. ಒಬ್ಬನ ಜನ್ಮ ದಿನಕ್ಕಿಂತ ಮರಣದ ದಿನವೇ ಮೇಲು.</verse>
				<verse number="2">ಔತಣದ ಮನೆಗೆ ಹೋಗುವುದಕ್ಕಿಂತ, ಶೋಕದ ಮನೆಗೆ ಹೋಗುವುದು ಲೇಸು. ಏಕೆಂದರೆ ಎಲ್ಲಾ ಮನುಷ್ಯರ ಅಂತ್ಯವು ಸಾವಾಗಿದೆ. ಇದರಿಂದ ಜೀವಂತರು ಇದನ್ನು ತಮ್ಮ ಹೃದಯದಲ್ಲಿ ಸ್ಮರಿಸಿಕೊಳ್ಳುವರು.</verse>
				<verse number="3">ನಗೆಗಿಂತ ದುಃಖವು ವಾಸಿ, ಏಕೆಂದರೆ ಮುಖದಲ್ಲಿ ದುಃಖ ಹೃದಯಕ್ಕೆ ಸುಖ.</verse>
				<verse number="4">ಜ್ಞಾನಿಗಳ ಹೃದಯವು ಶೋಕದ ಮನೆಯಲ್ಲಿರುವುದು, ಆದರೆ ಮೂಢರ ಹೃದಯವು ಉಲ್ಲಾಸದ ಮನೆಯಲ್ಲಿರುವುದು.</verse>
				<verse number="5">ಮೂಢರ ಹಾಡನ್ನು ಕೇಳುವುದಕ್ಕಿಂತ, ಜ್ಞಾನಿಗಳ ಗದರಿಕೆಯನ್ನು ಕೇಳುವುದು ಲೇಸು.</verse>
				<verse number="6">ಗಡಿಗೆಯ ಕೆಳಗೆ ಉರಿಯುವ ಮುಳ್ಳುಕಡ್ಡಿ ಚಟಚಟನೆಯ ಶಬ್ದ ಹೇಗೋ, ಮೂಢನ ನಗುವು ಹಾಗೆಯೇ ಇರುವುದು. ಇದು ಕೂಡ ವ್ಯರ್ಥವೇ.</verse>
				<verse number="7">ದಬ್ಬಾಳಿಕೆ ಜ್ಞಾನಿಯನ್ನು ಮೂರ್ಖನನ್ನಾಗಿ ಮಾಡುತ್ತದೆ. ಲಂಚವು ಹೃದಯವನ್ನು ಕೆಡಿಸುತ್ತದೆ.</verse>
				<verse number="8">ಪ್ರಾರಂಭಕ್ಕಿಂತ ಅದರ ಅಂತ್ಯವೇ ಲೇಸು. ಗರ್ವಿಷ್ಠನಿಗಿಂತ ತಾಳ್ಮೆಯುಳ್ಳವನೇ ಉತ್ತಮ.</verse>
				<verse number="9">ನೀನು ಕೋಪಿಸಿಕೊಳ್ಳುವುದಕ್ಕೆ ಆತುರಪಡದಿರು, ಏಕೆಂದರೆ ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.</verse>
				<verse number="10">“ಹಿಂದಿನ ಕಾಲ ಈಗಿನ ಕಾಲಕ್ಕಿಂತ ಮೇಲಾಗಿರುವುದಕ್ಕೆ ಕಾರಣ ಏನು?” ಎಂದು ನೀನು ಕೇಳಬೇಡ. ಇದು ಬುದ್ಧಿವಂತರು ಕೇಳುವ ಪ್ರಶ್ನೆಯಲ್ಲ.</verse>
				<verse number="11">ಜ್ಞಾನವು ಆಸ್ತಿಯ ಹಾಗೆ ಒಳ್ಳೆಯದು; ಅದರಿಂದ ಜೀವಂತರೆಲ್ಲರಿಗೂ ಲಾಭಕರ.</verse>
				<verse number="12">ಧನವು ಹೇಗೋ ಹಾಗೆ ಜ್ಞಾನವು ಆಶ್ರಯ. ಆದರೆ ಜ್ಞಾನದ ಶ್ರೇಷ್ಠತೆ ಏನೆಂದರೆ, ಅದು ಜ್ಞಾನಿಗೆ ಜೀವದಾಯಕ.</verse>
				<verse number="13">ದೇವರ ಸೃಷ್ಟಿಕಾರ್ಯವನ್ನು ಯೋಚಿಸು: ದೇವರು ಮಾಡಿದ್ದನ್ನು, ಪುನಃ ಸರಿಪಡಿಸಲು ಯಾರಿಗೆ ಸಾಧ್ಯ?</verse>
				<verse number="14">ಸುಖ ದಿನದಲ್ಲಿ ಸಂತೋಷವಾಗಿರು. ಆದರೆ ದುಃಖ ದಿನದಲ್ಲಿ ಇದನ್ನು ಯೋಚಿಸು: ದೇವರು ಇವುಗಳನ್ನು ಒಂದರ ಮೇಲೊಂದನ್ನು ಬರಮಾಡುತ್ತಾರೆ. ಹೀಗೆ ಮನುಷ್ಯನು ತನ್ನ ಆಯುಸ್ಸನ್ನು ಕಳೆದ ಮೇಲೆ ಭವಿಷ್ಯವನ್ನು ಗ್ರಹಿಸಲಾರನು.</verse>
				<verse number="15">ನನ್ನ ವ್ಯರ್ಥದ ದಿನಗಳಲ್ಲಿ ಇವೆರಡು ವಿಷಯಗಳನ್ನು ನೋಡಿದ್ದೇನೆ: ನೀತಿವಂತನು ತನ್ನ ನೀತಿಯಲ್ಲಿ ಗತಿಸಿಹೋಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ, ಇಡೀ ಜೀವಮಾನವನ್ನು ಕಳೆಯುತ್ತಾನೆ.</verse>
				<verse number="16">ನೀನು ಅತಿಯಾಗಿ ನೀತಿವಂತನಾಗಿರಬೇಡ. ಅತಿಯಾಗಿ ನಿನ್ನನ್ನು ಜ್ಞಾನಿಯನ್ನಾಗಿಯೂ ಮಾಡಿಕೊಳ್ಳಬೇಡ. ನಿನ್ನನ್ನು ನೀನೇ ಏಕೆ ನಾಶಪಡಿಸಿಕೊಳ್ಳುವೆ?</verse>
				<verse number="17">ನೀನು ದುಷ್ಟತನದಲ್ಲಿ ಸಾಗಬೇಡ, ಮೂರ್ಖತನದಲ್ಲಿಯೂ ಮುಂದುವರಿಯಬೇಡ. ನಿನ್ನ ಸಮಯಕ್ಕಿಂತ ಮೊದಲು ನೀನು ಏಕೆ ಸಾಯುವೆ?</verse>
				<verse number="18">ನೀನು ಇವುಗಳನ್ನು ಗ್ರಹಿಸಿಕೊಳ್ಳುವುದು ಒಳ್ಳೆಯದು. ಹೌದು, ಇವುಗಳನ್ನು ಮರೆಯಬೇಡ. ಏಕೆಂದರೆ ದೇವರಿಗೆ ಭಯಪಡುವವನು ಇವೆಲ್ಲವುಗಳಿಂದ ಪಾರಾಗುವನು.</verse>
				<verse number="19">ಪಟ್ಟಣದ ಹತ್ತು ಮಂದಿ ಅಧಿಕಾರಿಗಳ ಸ್ಥಿರತೆಗಿಂತ, ಜ್ಞಾನವು ಜ್ಞಾನಿಯನ್ನು ಹೆಚ್ಚಾಗಿ ಸ್ಥಿರಪಡಿಸುತ್ತದೆ.</verse>
				<verse number="20">ಪಾಪಮಾಡದೆ ಒಳ್ಳೆಯದನ್ನೇ ನಡೆಸುವ ನೀತಿವಂತನು, ಭೂಮಿಯ ಮೇಲೆ ಒಬ್ಬನೂ ಇಲ್ಲ.</verse>
				<verse number="21">ಜನರು ಆಡಿದ ಎಲ್ಲಾ ಮಾತುಗಳನ್ನು ನೀನು ಲಕ್ಷಿಸಬೇಡ, ನಿನ್ನ ಕೆಲಸದವರೂ ನಿನ್ನನ್ನು ಶಪಿಸಬಹುದು.</verse>
				<verse number="22">ನೀನು ಸಹ ಅನೇಕ ವೇಳೆ ಇತರರನ್ನು ಶಪಿಸಿದ್ದೀ, ಇದು ನಿನ್ನ ಹೃದಯಕ್ಕೆ ತಿಳಿದಿದೆ.</verse>
				<verse number="23">ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ, “ನಾನು ಜ್ಞಾನಿಯಾಗಿರಲು ತೀರ್ಮಾನಿಸುತ್ತೇನೆ,” ಎಂದುಕೊಂಡೆನು. ಆದರೆ ಅದು ನನ್ನಿಂದ ದೂರವಾಯಿತು.</verse>
				<verse number="24">ದೂರದಲ್ಲಿರುವುದನ್ನೂ, ಅಗಾಧದಲ್ಲಿರುವುದನ್ನೂ ಯಾರು ಕಂಡುಕೊಂಡಾರು?</verse>
				<verse number="25">ಜ್ಞಾನದ ಮೂಲ ತತ್ವವನ್ನೂ, ದುಷ್ಟತನದ ಮೂಢತನವನ್ನೂ, ಮೂಢತ್ವದ ಹುಚ್ಚುತನವನ್ನೂ ಪರೀಕ್ಷಿಸಿ ತಿಳಿದುಕೊಳ್ಳುವಂತೆ ಮನಸ್ಸುಮಾಡಿದೆನು.</verse>
				<verse number="26">ಕೆಟ್ಟ ಹೆಂಗಸಿನ ಹೃದಯವು ಬೋನೂ ಬಲೆಯೂ ಆಗಿರುತ್ತದೆ. ಅವಳ ಕೈ ಸಂಕೋಲೆ ಆಗಿರುತ್ತದೆ. ಇದು ಮರಣಕ್ಕಿಂತಲೂ ಕಠೋರವಾದದ್ದು ಎಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸುವವನು, ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು.</verse>
				<verse number="27">“ನೋಡು, ನಾನಿದನ್ನು ಹುಡುಕಿ ಕಂಡುಕೊಂಡಿದ್ದೇನೆ,” ಎಂದು ಪ್ರಸಂಗಿಯು ಹೇಳುತ್ತಿದ್ದಾನೆ: ನಾನು ಒಂದರ ನಂತರ ಮತ್ತೊಂದನ್ನು ಕೂಡಿಸಿ, ಸಂಶೋಧನೆಗಳನ್ನು ನಡೆಸಿದೆ;</verse>
				<verse number="28">ನಾನು ಹುಡುಕಿ ನೋಡಿದರೂ ನನಗೆ ಇದುವರೆಗೆ ಉತ್ತರ ಸಿಕ್ಕಲಿಲ್ಲ. ನಾನು ಸಾವಿರ ಪುರುಷರಲ್ಲಿ ಒಬ್ಬ ಸತ್ಯವಂತನನ್ನು ಕಂಡೆನು. ಆದರೆ ಸಾವಿರ ಸ್ತ್ರೀಯರಲ್ಲಿ ಒಬ್ಬ ಸತ್ಯವಂತಳನ್ನು ಕಂಡುಕೊಳ್ಳಲಿಲ್ಲ.</verse>
				<verse number="29">ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ: ದೇವರು ಮನುಷ್ಯರನ್ನು ಸತ್ಯವಂತರನ್ನಾಗಿ ಸೃಷ್ಟಿಸಿದರು. ಮನುಷ್ಯರಾದರೋ ಅನೇಕ ಸ್ವಾರ್ಥ ಯೋಜನೆಗಳನ್ನು ಮಾಡಿಕೊಂಡಿದ್ದಾರೆ.</verse>
			</chapter>
			<chapter number="8">
				<verse number="1">ಜ್ಞಾನಿಯ ಹಾಗೆ ಇರುವವರು ಯಾರು? ಈ ಸಂಗತಿಗಳ ಅರ್ಥವನ್ನು ವಿವರಿಸಬಲ್ಲವರು ಯಾರು? ಒಬ್ಬ ಮನುಷ್ಯನ ಜ್ಞಾನವು ಅವನ ಮುಖವನ್ನು ಬೆಳಗಿಸುತ್ತದೆ ಜ್ಞಾನವು ಕಠಿಣ ಮುಖಭಾವವನ್ನು ಸಹ ಬದಲಾಯಿಸುತ್ತದೆ.</verse>
				<verse number="2">ನೀವು ದೇವರ ಮುಂದೆ ಪ್ರಮಾಣ ಮಾಡಿದ್ದರಿಂದ, ಅರಸನ ಆಜ್ಞೆಯನ್ನು ಕೈಕೊಳ್ಳಿರಿ ಎಂದು ಹೇಳುತ್ತೇನೆ.</verse>
				<verse number="3">ಅರಸನನ್ನು ಬಿಟ್ಟುಹೋಗುವುದಕ್ಕೆ ಆತುರ ಪಡಬೇಡಿರಿ. ಅರಸನು ತನಗೆ ಇಷ್ಟಬಂದದ್ದನ್ನೆಲ್ಲಾ ಮಾಡುತ್ತಾನೆ. ನೀವು ಕೆಟ್ಟ ಕಾರ್ಯಕ್ಕಾಗಿ ನಿಲ್ಲಬೇಡಿರಿ.</verse>
				<verse number="4">ಅರಸನ ಮಾತುಗಳೇ ಸರ್ವೋನ್ನತವಾದುದರಿಂದ, “ನೀನು ಮಾಡುವುದೇನು?” ಎಂದು ಅವನಿಗೆ ಪ್ರಶ್ನಿಸುವವರಾರು?</verse>
				<verse number="5">ಅರಸನ ಆಜ್ಞೆಯನ್ನು ಪಾಲಿಸುವವನಿಗೆ ಕೇಡು ಸಂಭವಿಸುವುದಿಲ್ಲ, ಜ್ಞಾನಿಯ ಹೃದಯವು ಸರಿಯಾದ ಕಾಲ ಕ್ರಮವನ್ನು ತಿಳಿದುಕೊಳ್ಳುತ್ತದೆ.</verse>
				<verse number="6">ಮನುಷ್ಯನಿಗೆ ಕಷ್ಟಸಂಕಟವು ಭಾರವಾಗಿದ್ದರೂ ಪ್ರತಿಯೊಂದು ಕಾರ್ಯಕ್ಕೂ ಸರಿಯಾದ ಕಾಲ ಮತ್ತು ಕ್ರಮ ಇರುತ್ತದೆ.</verse>
				<verse number="7">ಏಕೆಂದರೆ ಮುಂದೆ ಆಗುವುದೇನೆಂದು ಯಾರಿಗೂ ತಿಳಿಯದು. ಮುಂದೆ ಏನಾಗುವುದೆಂದು ಮನುಷ್ಯನಿಗೆ ತಿಳಿಸುವವರು ಯಾರು ಇಲ್ಲ.</verse>
				<verse number="8">ನಮ್ಮ ಆತ್ಮವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಹಾಗೆಯೇ ಸಾಯುವ ಸಮಯವನ್ನು ತಡೆಯುವ ಶಕ್ತಿಯು ಸಹ ಯಾರಿಗೂ ಇಲ್ಲ. ಯುದ್ಧ ಸಮಯದಲ್ಲಿ ಹೇಗೆ ವಿರಾಮ ಇರುವುದಿಲ್ಲವೋ, ಹಾಗೆಯೇ ದುಷ್ಟನಿಗೆ ದುಷ್ಟತ್ವದಿಂದ ಬಿಡುಗಡೆಯೇ ಇಲ್ಲ.</verse>
				<verse number="9">ನಾನು ಇದನ್ನೆಲ್ಲಾ ನೋಡಿ, ಸೂರ್ಯನ ಕೆಳಗೆ ಮಾಡುವ ಪ್ರತಿಯೊಂದು ಕೆಲಸಕ್ಕೂ ನನ್ನ ಹೃದಯವನ್ನು ಪ್ರಯೋಗಿಸಿದ್ದೇನೆ. ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ತನ್ನ ಹಾನಿಗಾಗಿ ಅಧಿಕಾರ ನಡೆಸುವ ಕಾಲವೂ ಇದೆ.</verse>
				<verse number="10">ಇದಲ್ಲದೆ ದುರ್ಜನರು ಸತ್ತು ಸಮಾಧಿಯಾಗುವುದನ್ನೂ ನಾನು ನೋಡಿದ್ದೇನೆ. ಆದರೆ ಜನರು ಪರಿಶುದ್ಧ ಸ್ಥಳಕ್ಕೆ ಹೋಗಿ ಬಂದ ಆ ದುಷ್ಟರನ್ನು ಅವರಿದ್ದ ಪಟ್ಟಣದಲ್ಲಿ ಹೊಗಳುತ್ತಾರೆ. ಇದೂ ಸಹ ನಿರರ್ಥಕವಾದದ್ದು.</verse>
				<verse number="11">ಏಕೆಂದರೆ ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವುದರಿಂದ ಮನುಷ್ಯರ ಹೃದಯವು ಅವರನ್ನು ಕೆಟ್ಟದ್ದು ಮಾಡುವ ಯುಕ್ತಿಯಲ್ಲಿಯೇ ತುಂಬಿರುವುದು.</verse>
				<verse number="12">ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ, ಬಹುಕಾಲ ಬದುಕಿದರೂ ದೇವರಿಗೆ ಹೆದರಿ ದೈವಭಕ್ತಿಯುಳ್ಳವರಿಗೆ ಒಳ್ಳೆಯದಾಗುವುದೆಂದು ನಾನು ಬಲ್ಲೆನು.</verse>
				<verse number="13">ದುಷ್ಟರು ದೇವರಿಗೆ ಭಯಪಡುವುದಿಲ್ಲ. ಆದ್ದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ. ನೆರಳಿನ ಹಾಗಿರುವ ದುಷ್ಟರ ದಿನಗಳು ಹೆಚ್ಚುವುದಿಲ್ಲ.</verse>
				<verse number="14">ಭೂಮಿಯ ಮೇಲೆ ನಡೆಯುವ ಇನ್ನೊಂದು ವ್ಯರ್ಥ ಕಾರ್ಯವಿದು: ದುಷ್ಟರಿಗೆ ಆಗಬೇಕಾದ ಶಿಕ್ಷೆಯನ್ನು ನೀತಿವಂತರು ಅನುಭವಿಸುತ್ತಾರೆ. ನೀತಿವಂತರಿಗೆ ಆಗಬೇಕಾದ ಪ್ರತಿಫಲವನ್ನು ದುಷ್ಟರು ಅನುಭವಿಸುತ್ತಾರೆ. ಇದು ಸಹ ವ್ಯರ್ಥವೆಂದು ನಾನು ಹೇಳುತ್ತೇನೆ.</verse>
				<verse number="15">ಆದುದರಿಂದ ನಾನು ಸಂತೋಷವನ್ನು ಮೆಚ್ಚಿದೆನು. ಏಕೆಂದರೆ ಮನುಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವುದೂ ತಿನ್ನುವುದೂ ಸಂತೋಷಪಡುವುದೇ ಹೊರತು ಬೇರೇನೂ ಒಳ್ಳೆಯದಿಲ್ಲ. ಸೂರ್ಯನ ಕೆಳಗೆ ದೇವರು ಮನುಷ್ಯನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟಕ್ಕೆ ಸುಖಾನುಭವವು ಅವನಿಗೆ ಸೇರಿರುತ್ತದೆ.</verse>
				<verse number="16">ಜ್ಞಾನವನ್ನು ತಿಳಿದುಕೊಳ್ಳುವುದಕ್ಕೂ ಭೂಮಿಯ ಮೇಲೆ ಮಾಡುವ ಪರಿಶ್ರಮವನ್ನು ನೋಡುವುದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು. ಜನರು ರಾತ್ರಿ ಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ಹಚ್ಚಗೊಡದವರೂ ಇದ್ದಾರೆ.</verse>
				<verse number="17">ತರುವಾಯ ದೇವರ ಮಾಡುವ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು. ಅದೇನೆಂದರೆ, ಸೂರ್ಯನ ಕೆಳಗೆ ಮಾಡುವ ದೇವರ ಕೆಲಸಗಳನ್ನು ಮನುಷ್ಯನು ಗ್ರಹಿಸಲಾರನು. ಮನುಷ್ಯನು ಅದನ್ನು ಹುಡುಕುವುದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡುಕೊಳ್ಳಲಾರನು. ಹೌದು, ಜ್ಞಾನಿಯು ಸಹ ದೇವರು ಮಾಡುವುದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.</verse>
			</chapter>
			<chapter number="9">
				<verse number="1">ನಾನು ಇವೆಲ್ಲವುಗಳ ಮೇಲೆ ಅಭ್ಯಾಸ ಮಾಡಿ ಈ ತೀರ್ಮಾನಕ್ಕೆ ಬಂದೆನು. ಅದೇನೆಂದರೆ, ನೀತಿವಂತರ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಆದರೆ ಅವರಿಗೆ ಪ್ರೀತಿ ಕಾದಿದೆಯೋ ಅಥವಾ ದ್ವೇಷ ಕಾದಿದೆಯೋ ಎಂದು ಯಾರಿಗೂ ಗೊತ್ತಿಲ್ಲ.</verse>
				<verse number="2">ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ದುಷ್ಟನಿಗೂ ಒಳ್ಳೆಯವನಿಗೂ ಕೆಟ್ಟವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಯಜ್ಞ ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನಿಗೆ ಹೇಗೋ ಹಾಗೆಯೇ ಪಾಪಿಗೂ ಇರುವುದು. ಆಣೆಯಿಡುವವನಿಗೆ ಹೇಗೋ ಹಾಗೆಯೇ, ಆಣೆಯಿಡಲು ಭಯಪಡುವವನಿಗೂ ಇರುವುದು.</verse>
				<verse number="3">ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ವ್ಯಸನವು. ಎಲ್ಲರಿಗೂ ಒಂದೇ ಗತಿ ಇದೆ. ಹೌದು, ಮನುಷ್ಯರ ಹೃದಯದಲ್ಲಿ ಕೆಟ್ಟತನ ತುಂಬಿವೆ. ಅವರು ಬದುಕಿರುವ ತನಕ ಅವರ ಹೃದಯಗಳಲ್ಲಿ ಹುಚ್ಚುತನವಿದೆ. ಅನಂತರ ಅವರು ಸಾಯುತ್ತಾರೆ.</verse>
				<verse number="4">ಜೀವಂತರ ಗುಂಪಿಗೆ ಸೇರಿಕೊಂಡವನಿಗೆ ನಿರೀಕ್ಷೆ ಇರುವುದು. ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಉತ್ತಮ.</verse>
				<verse number="5">ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿದ್ದಾರೆ, ಆದರೆ ಸತ್ತವರಿಗೆ ಏನೂ ತಿಳಿಯದು; ಅವರಿಗೆ ಇನ್ನು ಮೇಲೆ ಪ್ರತಿಫಲ ಇಲ್ಲ. ಅವರ ಹೆಸರನ್ನು ಸಹ ಜನರು ಮರೆತುಬಿಡುತ್ತಾರೆ.</verse>
				<verse number="6">ಅವರ ಪ್ರೀತಿಯೂ ಅವರ ದ್ವೇಷವೂ ಅವರ ಅಸೂಯೆ ಕೂಡ, ಅವರು ಸತ್ತಾಗಲೇ ಅಳಿದುಹೋಗುತ್ತವೆ. ಸೂರ್ಯನ ಕೆಳಗೆ ನಡೆಯುವ ಯಾವ ಸಂಗತಿಗಳಲ್ಲಿಯೂ ಸತ್ತವರಿಗೆ ಇನ್ನೆಂದಿಗೂ ಪಾಲು ಇಲ್ಲ.</verse>
				<verse number="7">ನೀನು ಹೋಗಿ ನಿನ್ನ ಆಹಾರವನ್ನು ಸಂತೋಷದಿಂದ ತಿಂದು ಹರ್ಷ ಹೃದಯದಿಂದ ನಿನ್ನ ದ್ರಾಕ್ಷಾರಸವನ್ನು ಕುಡಿ. ಏಕೆಂದರೆ ನಿನ್ನ ಕೆಲಸಗಳನ್ನು ದೇವರು ಈಗಾಗಲೇ ಮೆಚ್ಚಿಕೊಂಡಿದ್ದಾರೆ.</verse>
				<verse number="8">ನಿನ್ನ ವಸ್ತ್ರಗಳು ಯಾವಾಗಲೂ ಬಿಳುಪಾಗಿರಲಿ, ನಿನ್ನ ತಲೆಗೆ ಯಾವಾಗಲೂ ಎಣ್ಣೆ ಹಚ್ಚಿರಲಿ.</verse>
				<verse number="9">ಈ ನಿರರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ದೇವರು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ, ನೀನು ಪ್ರೀತಿಸುವ ನಿನ್ನ ಹೆಂಡತಿಯೊಡನೆ ಆನಂದದಿಂದ ವಾಸಿಸು. ಸೂರ್ಯನ ಕೆಳಗೆ ನೀನು ಪಡುವ ನಿನ್ನ ಜೀವನದ ಕಷ್ಟದಲ್ಲಿ ಇದೇ ನಿನ್ನ ಪಾಲಾಗಿದೆ.</verse>
				<verse number="10">ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.</verse>
				<verse number="11">ನಾನು ಮತ್ತೆ ಸೂರ್ಯನ ಕೆಳಗೆ ನೋಡಿದ್ದೇನೆಂದರೆ, ವೇಗಿಗಳಿಗೆ ಓಟವೂ ಪರಾಕ್ರಮಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ಆಹಾರವೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವುದು ಎಂಬ ನಿಶ್ಚಯ ಇಲ್ಲ. ಏಕೆಂದರೆ ಕಾಲವೂ ಅವಕಾಶವೂ ಅವರೆಲ್ಲರಿಗೆ ಒಳಪಟ್ಟಿರುತ್ತವೆ.</verse>
				<verse number="12">ಇದಲ್ಲದೆ, ಅವರವರ ಸಮಯ ಯಾವಾಗ ಬರುತ್ತದೆ ಎಂದು ಯಾರಿಗೂ ತಿಳಿಯದು. ಕ್ರೂರ ಬಲೆಯಿಂದ ಹಿಡಿಯುವ ಮೀನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗಳಂತೆಯೂ ಕೇಡಿನ ಕಾಲವು ತಟ್ಟನೆ ಬೀಳುವಾಗ ಜನರು ಸಿಕ್ಕಿಕೊಳ್ಳುತ್ತಾರೆ.</verse>
				<verse number="13">ಸೂರ್ಯನ ಕೆಳಗೆ ನಾನು ಜ್ಞಾನವನ್ನು ಈ ವಿಧವಾಗಿ ನೋಡಿದ್ದೇನೆ. ಇದು ನನ್ನ ದೃಷ್ಟಿಗೆ ದೊಡ್ಡದಾಗಿ ಕಾಣಿಸಿತು.</verse>
				<verse number="14">ಒಂದು ಕಾಲದಲ್ಲಿ ಒಂದು ಸಣ್ಣ ನಗರವಿತ್ತು, ಅದರಲ್ಲಿ ಕೆಲವೇ ಜನರಿದ್ದರು. ಆಗ ಅಲ್ಲಿ ಒಬ್ಬ ಮಹಾ ಅರಸನು ಬಂದು ಅದನ್ನು ಮುತ್ತಿಗೆ ಹಾಕಿ, ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು.</verse>
				<verse number="15">ಆಗ ಅದರಲ್ಲಿ ಒಬ್ಬ ಜ್ಞಾನಿಯಾದ ಬಡ ಮನುಷ್ಯನು ಬಂದು, ತನ್ನ ಜ್ಞಾನದಿಂದ ಆ ಪಟ್ಟಣವನ್ನು ರಕ್ಷಿಸಿದನು. ಆದರೂ ಆ ಬಡ ಮನುಷ್ಯನನ್ನು ಯಾರೂ ಜ್ಞಾಪಕ ಮಾಡಿಕೊಳ್ಳಲಿಲ್ಲ.</verse>
				<verse number="16">ಇದನ್ನು ನೋಡಿ ನಾನು, “ಬಲಕ್ಕಿಂತ ಜ್ಞಾನವು ಉತ್ತಮ; ಆದರೆ ಜನರು ಬಡವನ ಜ್ಞಾನವನ್ನು ತಿರಸ್ಕಾರ ಮಾಡುತ್ತಾರೆ, ಅವನ ಮಾತುಗಳನ್ನು ಯಾರೂ ಲಕ್ಷಿಸುವುದಿಲ್ಲ,” ಎಂದುಕೊಂಡೆನು.</verse>
				<verse number="17">ಹುಚ್ಚರನ್ನು ಆಳುವವನ ಕೂಗಾಟಕ್ಕಿಂತಲೂ ಜ್ಞಾನಿಯ ಸಮಾಧಾನದ ಮಾತಿಗೆ ಮಹತ್ವ ಇದೆ.</verse>
				<verse number="18">ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಬಹು ಶುಭವನ್ನು ಹಾಳುಮಾಡುವನು.</verse>
			</chapter>
			<chapter number="10">
				<verse number="1">ಸತ್ತ ನೊಣಗಳು ಸುಗಂಧ ತೈಲವನ್ನು ದುರ್ವಾಸನೆಗೆ ಒಳಪಡಿಸುತ್ತದೆ. ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮಾನಗಳನ್ನು ಕೆಡಿಸಿಬಿಡುತ್ತದೆ.</verse>
				<verse number="2">ಜ್ಞಾನಿಯ ಹೃದಯವು ಬಲಗಡೆ ಸಾಗಿದರೆ, ಮೂರ್ಖನ ಹೃದಯವು ಎಡಗಡೆ ಸಾಗುವುದು.</verse>
				<verse number="3">ಮೂರ್ಖನು ಮಾರ್ಗದಲ್ಲಿ ನಡೆಯುವಾಗಲೂ, ತಾನು ಅರಿವಿಲ್ಲದ ಮೂರ್ಖನೆಂದು ಪ್ರತಿಯೊಬ್ಬರಿಗೂ ಪ್ರಕಟಿಸುತ್ತಾನೆ.</verse>
				<verse number="4">ಅಧಿಕಾರಿಯು ನಿನಗೆ ವಿರುದ್ಧವಾಗಿ ಸಿಟ್ಟುಗೊಂಡರೆ, ನಿನ್ನ ಉದ್ಯೋಗವನ್ನು ಬಿಟ್ಟುಬಿಡಬೇಡ. ಏಕೆಂದರೆ ತಾಳ್ಮೆಯು ದೊಡ್ಡ ಅಪರಾಧಗಳನ್ನು ಶಾಂತಪಡಿಸುತ್ತದೆ.</verse>
				<verse number="5">ಮತ್ತೊಂದು ವ್ಯಸನವನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ. ಅದು ಆಳುವವರಿಂದ ಬರುವ ತಪ್ಪಿನಿಂದಾದದ್ದು.</verse>
				<verse number="6">ಅದು ಯಾವುದೆಂದರೆ, ಮೂರ್ಖರನ್ನು ಉನ್ನತ ಪದವಿಗೆ ನೇಮಿಸುವುದು. ಘನವಂತರನ್ನು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವಂತೆ ಮಾಡುವುದು.</verse>
				<verse number="7">ಕುದುರೆಗಳ ಮೇಲೆ ಸವಾರಿ ಮಾಡುವ ಸೇವಕರನ್ನೂ ಅಧಿಕಾರಿಗಳು ಸೇವಕರ ಹಾಗೆ ನಡೆದುಕೊಂಡು ಹೋಗುವುದನ್ನೂ ನಾನು ನೋಡಿದ್ದೇನೆ.</verse>
				<verse number="8">ಗುಂಡಿಯನ್ನು ಅಗೆಯುವವನೇ ಅದರಲ್ಲಿ ಬೀಳುವನು. ಗೋಡೆಯನ್ನು ಒಡೆಯುವವನನ್ನು ಹಾವು ಕಡಿಯುವುದು.</verse>
				<verse number="9">ಗಣಿಯಿಂದ ಬಂಡೆಗಳನ್ನು ಸೀಳುವವನು ಗಾಯಗೊಳ್ಳುವನು. ಮರಕಡಿಯುವವನು ಅದರಿಂದಲೇ ಅಪಾಯಕ್ಕೊಳಗಾಗುವನು.</verse>
				<verse number="10">ಮೊಂಡುಕೊಡಲಿಯ ಬಾಯನ್ನು ಮೊನೆಮಾಡದಿದ್ದರೆ, ಹೆಚ್ಚು ಬಲವನ್ನು ಪ್ರಯೋಗಿಸಬೇಕಾಗುವುದು, ಆದರೆ ಜ್ಞಾನವೇ ಯಶಸ್ಸನ್ನು ತರುತ್ತದೆ.</verse>
				<verse number="11">ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ, ಹಾವಾಡಿಗನಿಗೆ ಏನು ಪ್ರಯೋಜನ?</verse>
				<verse number="12">ಜ್ಞಾನಿಯ ಮಾತುಗಳು ಹಿತಕರ. ಆದರೆ ಬುದ್ಧಿಹೀನನ ಮಾತುಗಳು ಅವನಿಗೆ ವಿನಾಶಕರ.</verse>
				<verse number="13">ಅವನ ಮಾತುಗಳು ಆರಂಭದಲ್ಲಿ ಮೂಢತನವಾಗಿರುವುದು. ಅವನ ಮಾತಿನ ಅಂತ್ಯವು ಹುಚ್ಚುತನವಾಗಿರುವುದು.</verse>
				<verse number="14">ಮೂಢನು ಮಾತುಗಳನ್ನು ಹೆಚ್ಚಿಸುತ್ತಾನೆ. ಆದರೂ ಅವನು ಭವಿಷ್ಯ ಏನೆಂದು ತಿಳಿಯನು. ಅವನ ತರುವಾಯ ಆಗುವುದನ್ನೂ ಅವನಿಗೆ ತಿಳಿಸುವವರು ಇಲ್ಲ.</verse>
				<verse number="15">ಮೂಢರ ಕಷ್ಟವು ಅವರನ್ನು ದಣಿಸುತ್ತದೆ. ನಗರಕ್ಕೆ ಹೇಗೆ ಹೋಗಬೇಕೆಂದು ಸಹ ಅವನಿಗೆ ತಿಳಿಯದು.</verse>
				<verse number="16">ಬಾಲಕನಾಗಿದ್ದವನು ದೇಶಕ್ಕೆ ಅರಸನಾಗಿದ್ದರೆ, ನಾಯಕರೆಲ್ಲರು ಬೆಳಿಗ್ಗೆಯೇ ಔತಣಕ್ಕೆ ಕೂತುಕೊಂಡರೆ ಅಯ್ಯೋ ಕಷ್ಟ!</verse>
				<verse number="17">ಶ್ರೇಷ್ಠ ಹಿನ್ನೆಲೆಯವನು ದೇಶಕ್ಕೆ ಅರಸನಾದರೆ, ರಾಜಕುಮಾರರು ಕುಡುಕರಾಗುವುದಕ್ಕೆ ಬದಲು, ಸರಿಯಾದ ಸಮಯದಲ್ಲಿ ಶಕ್ತಿಗಾಗಿ ಊಟ ಮಾಡಿದರೆ ಅದು ದೇಶಕ್ಕೆ ಆಶೀರ್ವಾದ.</verse>
				<verse number="18">ಸೋಮಾರಿತನದಿಂದ ಮನೆ ಕುಸಿಯುತ್ತದೆ. ಜೋಲುಗೈಯಿಂದ ಮನೆ ಸೋರುತ್ತದೆ.</verse>
				<verse number="19">ವಿನೋದಕ್ಕಾಗಿ ಔತಣ ಮಾಡುತ್ತಾರೆ, ಆನಂದಕ್ಕಾಗಿ ದ್ರಾಕ್ಷಾರಸ ಕುಡಿಯುತ್ತಾರೆ; ಎಲ್ಲವನ್ನೂ ಒದಗಿಸಿಕೊಡುವುದಕ್ಕಾಗಿ ಹಣವು.</verse>
				<verse number="20">ನಿನ್ನ ಆಲೋಚನೆಯಲ್ಲಿಯೂ ಅರಸನನ್ನು ನಿಂದಿಸಬೇಡ. ನೀನು ಮಲಗುವ ಕೋಣೆಯಲ್ಲಿ ಐಶ್ವರ್ಯವಂತರನ್ನು ಶಪಿಸಬೇಡ. ಏಕೆಂದರೆ ಆಕಾಶದ ಪಕ್ಷಿಗಳು ನಿನ್ನ ಮಾತನ್ನು ತೆಗೆದುಕೊಂಡು ಹೋಗಬಹುದು. ಹಾರುವ ಪಕ್ಷಿ ನಿನ್ನ ಸುದ್ದಿಯನ್ನು ತಿಳಿಸಬಹುದು.</verse>
			</chapter>
			<chapter number="11">
				<verse number="1">ನಿನ್ನ ಆಹಾರ ಧಾನ್ಯವನ್ನು ಹೊರನಾಡಿನ ವ್ಯಾಪಾರಕ್ಕೆ ಕಳುಹಿಸು. ಬಹಳ ದಿನಗಳ ಮೇಲೆ ಅದರಿಂದ ನಿನಗೆ ಲಾಭ ಸಿಗುವುದು.</verse>
				<verse number="2">ನಿನ್ನ ಹಣವನ್ನು ಏಳೆಂಟು ಮಂದಿಗೆ ವೆಚ್ಚಮಾಡು. ಏಕೆಂದರೆ ಭೂಮಿಯ ಮೇಲೆ ಮುಂದೆ ಯಾವ ವಿಪತ್ತು ಬರುವುದೋ ನಿನಗೆ ತಿಳಿಯದು.</verse>
				<verse number="3">ಮೋಡಗಳು ಮಳೆಯಿಂದ ತುಂಬಿದ್ದರೆ, ಅವು ಭೂಮಿಯ ಮೇಲೆ ಸುರಿದುಬಿಡುತ್ತವೆ. ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ, ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವುದು.</verse>
				<verse number="4">ಯಾವನು ಗಾಳಿಗಾಗಿ ಕಾದಿರುವನೋ, ಅವನು ಬೀಜ ಬಿತ್ತುವುದಿಲ್ಲ. ಮೋಡಗಳನ್ನು ಗಮನಿಸುತ್ತಿರುವವನು ಸಹ ಪೈರು ಕೊಯ್ಯುವುದಿಲ್ಲ.</verse>
				<verse number="5">ಗಾಳಿಯ ಚಲನೆಯನ್ನಾಗಲಿ ಗರ್ಭಿಣಿಯ ಭ್ರೂಣದ ಬೆಳವಣಿಗೆಯನ್ನಾಗಲಿ ನೀನು ಹೇಗೆ ಗ್ರಹಿಸಲಾರೆಯೋ, ಹಾಗೆಯೇ, ಸರ್ವ ಸೃಷ್ಟಿಕರ್ತ ಆಗಿರುವ ದೇವರ ಕೆಲಸವನ್ನು ನೀನು ಗ್ರಹಿಸಲಾರೆ.</verse>
				<verse number="6">ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು. ಸಾಯಂಕಾಲದವರೆಗೂ ನಿನ್ನ ಕೈಗೆ ಬಿಡುವು ಕೊಡಬೇಡ. ಏಕೆಂದರೆ ಇದು ಸಫಲವೋ ಅದು ಸಫಲವೋ ನಿನಗೆ ತಿಳಿಯದು. ಎರಡೂ ಒಳ್ಳೆಯ ಬೆಳೆಯನ್ನು ಕೊಡಲು ಸಾಧ್ಯವಿದೆ.</verse>
				<verse number="7">ಬೆಳಕು ಹಿತಕರ. ಸೂರ್ಯನ ಕಾಂತಿ ಕಣ್ಣುಗಳಿಗೆ ಮೆಚ್ಚಿಕೆ.</verse>
				<verse number="8">ಒಬ್ಬನು ಅನೇಕ ವರ್ಷಗಳು ಬದುಕಿ, ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಕತ್ತಲೆಯ ದಿನಗಳನ್ನು ನೆನಪಿಸಿಕೊಳ್ಳಲಿ, ಏಕೆಂದರೆ ಅಂಥ ದಿನಗಳು ಬಹಳ. ಮುಂದಾಗುವುದೆಲ್ಲವೂ ವ್ಯರ್ಥವೇ.</verse>
				<verse number="9">ಯುವಕನೇ, ನಿನ್ನ ಯೌವನದಲ್ಲಿ ಸಂತೋಷಪಡು. ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ. ನೀನು ನಿನ್ನ ಮನಸ್ಸಿಗೆ ಬಂದಂತೆಯೂ ನಿನ್ನ ಕಣ್ಣಿನ ನೋಟದಂತೆಯೂ ನಡೆ. ಆದರೆ ಈ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯವಿಚಾರಿಸುವರು ಎಂದು ತಿಳಿದುಕೋ.</verse>
				<verse number="10">ಆದ್ದರಿಂದ ನಿನ್ನ ಹೃದಯದಿಂದ ಚಿಂತೆಯನ್ನು ತೆಗೆದುಹಾಕು. ನಿನ್ನ ಶರೀರದಿಂದ ಕೆಟ್ಟದ್ದನ್ನು ದೂರಮಾಡು. ಯೌವನವೂ ಅದರ ಚೈತನ್ಯವೂ ಅಲ್ಪಕಾಲವೇ.</verse>
			</chapter>
			<chapter number="12">
				<verse number="1">ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ,” ಎಂದು ನೀನು ಹೇಳುವ ವರ್ಷಗಳು ಸಮೀಪಿಸುವುದಕ್ಕೆ ಮೊದಲು, ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ದೇವರನ್ನು ಸ್ಮರಿಸು.</verse>
				<verse number="2">ಸೂರ್ಯ ಚಂದ್ರ ನಕ್ಷತ್ರಗಳೂ ನಿನಗೆ ಮೊಬ್ಬಾಗಿ, ಮಳೆಯ ಮೋಡಗಳು ಮತ್ತೆ ಬರುವುದಕ್ಕಿಂತ ಮೊದಲು ದೇವರನ್ನು ಸ್ಮರಿಸು.</verse>
				<verse number="3">ಆ ದಿನದಲ್ಲಿ ಮನೆ ಕಾಯುವವರು ನಡುಗುವರು. ಬಲವಾದ ಮನುಷ್ಯರು ಸಹ ತಾವಾಗಿಯೇ ಬಗ್ಗುವರು. ಅರೆಯುವವರು ಕೆಲವರೇ ಉಳಿದಿರುವುದರಿಂದ ಸುಮ್ಮನಿರುವರು. ಕಿಟಕಿಗಳಿಂದ ಹೊರಗೆ ನೋಡುವವರು ಮಂಕಾಗುವರು.</verse>
				<verse number="4">ಬೀದಿ ಬಾಗಿಲುಗಳು ಮುಚ್ಚಿರುವುವು, ಅರೆಯುವ ಶಬ್ದವು ಕಡಿಮೆಯಾಗುವುದು; ಪಕ್ಷಿಯ ಶಬ್ದವಾದಾಗ ಎದ್ದೇಳುವುದು ತಡವಾಗುವುದು. ಮುಂಜಾನೆಯ ಗಾನಸ್ವರ ಮಂದವಾಗುವುದು.</verse>
				<verse number="5">ಎತ್ತರವನ್ನು ಕಂಡು ಹೆದರಿಕೆಯಾಗುವುದು. ದಾರಿಯ ಅಪಾಯಗಳ ಬಗ್ಗೆ ಅಂಜಿಕೆಯಾಗುವುದು. ಬಾದಾಮಿಯ ಮರದಂತೆ ಹೂವು ಬಿಡುವುದು. ಮಿಡತೆಯು ಸಹ ಭಾರಾವಾಗಿರುವುದು. ಆಸೆ ಕುಂದಿಹೋಗುವುದು. ಈ ರೀತಿಯಾಗಿ ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಟು ಹೋಗುವರು. ಗೋಳಾಡುವವರು ಬೀದಿಯಲ್ಲಿ ತಿರುಗಾಡುವರು.</verse>
				<verse number="6">ಬೆಳ್ಳಿಯಂತ ಸರ ಕಿತ್ತುಹೋಗುವುದು, ಬಂಗಾರದಂತ ಬಟ್ಟಲು ಜಜ್ಜಿ ಹೋಗುವುದು. ಮಣ್ಣಿನ ಮಡಕೆಯು ಬುಗ್ಗೆಯ ಹತ್ತಿರ ಒಡೆದು ಹೋಗುವುದು. ಬಾವಿಯ ರಾಟೆ ಮುರಿಯುವುದು.</verse>
				<verse number="7">ಆಮೇಲೆ ಮಣ್ಣಿನ ದೇಹ ಅದು ಇದ್ದ ಹಾಗೆಯೇ ಭೂಮಿಗೆ ಸೇರುವುದು. ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂದಿರುಗುವುದು.</verse>
				<verse number="8">“ವ್ಯರ್ಥ, ವ್ಯರ್ಥವೇ! ಎಲ್ಲವೂ ವ್ಯರ್ಥವೇ!” ಎಂದು ಪ್ರಸಂಗಿ ಹೇಳುತ್ತಾನೆ.</verse>
				<verse number="9">ಇದಲ್ಲದೆ ಜ್ಞಾನವಂತ ಪ್ರಸಂಗಿಯು ಇನ್ನೂ ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು. ಅನೇಕ ಜ್ಞಾನೋಕ್ತಿಗಳನ್ನು ಅವನು ಪರೀಕ್ಷಿಸಿ, ವಿಚಾರಿಸಿ ಕ್ರಮಪಡಿಸಿದನು.</verse>
				<verse number="10">ಪ್ರಸಂಗಿಯು ಸೂಕ್ತ ವಾಕ್ಯಗಳನ್ನು ಹುಡುಕಿ ಕಂಡುಹಿಡಿದನು. ಹಾಗೆ ಬರೆದವುಗಳು ಯಥಾರ್ಥ ಮತ್ತು ಸತ್ಯವಾದ ಮಾತುಗಳು.</verse>
				<verse number="11">ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗಿರುತ್ತವೆ. ಅವರು ಸಂಗ್ರಹಿಸಿದ ವಚನಗಳು ಒಬ್ಬ ಆತ್ಮಿಕ ಕುರುಬನಿಂದ ನೆಟ್ಟ ಮೊಳೆಗಳ ಹಾಗೆ ಕೊಡಲಾಗಿವೆ.</verse>
				<verse number="12">ನನ್ನ ಮಗುವೇ, ಇವುಗಳನ್ನಲ್ಲದೇ, ನೀನು ಎಚ್ಚರಿಕೆಯಿಂದ ಇರಬೇಕಾದ ವಿಷಯಗಳು ಇನ್ನೂ ಇವೆ. ಬಹಳ ಪುಸ್ತಕಗಳ ರಚನೆಗೆ ಅಂತ್ಯವಿಲ್ಲ. ಅತಿಯಾದ ಅಭ್ಯಾಸವು ದೇಹಕ್ಕೆ ಆಯಾಸ.</verse>
				<verse number="13">ಈಗ ನಾವು ಎಲ್ಲಾ ವಿಷಯವನ್ನೂ ಕೇಳಿ ಮುಗಿಯಿತು. ದೇವರಿಗೆ ಭಯಪಡು ಮತ್ತು ದೇವರ ಆಜ್ಞೆಗಳನ್ನು ಪಾಲಿಸು. ಇದೇ ಮನುಷ್ಯನ ಪ್ರಮುಖ ಕರ್ತವ್ಯ.</verse>
				<verse number="14">ಏಕೆಂದರೆ ಒಳ್ಳೆಯದಾಗಿರಲಿ, ಕೆಟ್ಟದ್ದಾಗಿರಲಿ, ದೇವರು ಆ ಎಲ್ಲಾ ಕಾರ್ಯಗಳನ್ನೂ ಪ್ರತಿಯೊಂದು ರಹಸ್ಯವನ್ನೂ ನ್ಯಾಯವಿಚಾರಣೆಗೆ ತರುವರು.</verse>
			</chapter>
		</book>
		<book number="22">
			<chapter number="1">
				<verse number="1">ಸೊಲೊಮೋನನ ಪರಮಗೀತೆ.</verse>
				<verse number="2">ಬಾಯಿಯ ಮುದ್ದುಗಳಿಂದ ನನಗೆ ಮುದ್ದಿಡಲಿ, ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಉತ್ತಮ.</verse>
				<verse number="3">ನೀನು ಹಚ್ಚಿಕೊಂಡಿರುವ ಸುಗಂಧ ತೈಲದ ಪರಿಮಳವು ಮೆಚ್ಚಿಕೆಯಾಗಿದೆ. ನಿನ್ನ ಹೆಸರು ಸುರಿದ ಸುಗಂಧ ತೈಲವಾಗಿದೆ. ಆದ್ದರಿಂದ ಕನ್ಯೆಯರು ನಿನ್ನನ್ನು ಪ್ರೀತಿ ಮಾಡುತ್ತಾರೆ!</verse>
				<verse number="4">ನನ್ನನ್ನು ನಿನ್ನೊಂದಿಗೆ ಕರೆದುಕೊಂಡು ಹೋಗಲು ಅವಸರಪಡು! ಅರಸನು ನನ್ನನ್ನು ತನ್ನ ಕೊಠಡಿಯೊಳಗೆ ಕರೆದುಕೊಂಡು ಬರಲಿ. ನಾವು ನಿನ್ನಲ್ಲಿ ಉಲ್ಲಾಸಪಟ್ಟು, ಸಂತೋಷ ಪಡುತ್ತೇವೆ. ದ್ರಾಕ್ಷಾರಸಕ್ಕಿಂತ ಹೆಚ್ಚಾಗಿ ನಿನ್ನ ಪ್ರೀತಿಯನ್ನು ಹೊಗಳುತ್ತೇವೆ. ಅವರು ಯಥಾರ್ಥವಾಗಿ ನಿನ್ನನ್ನು ಮೆಚ್ಚುತ್ತಾರೆ!</verse>
				<verse number="5">ಯೆರೂಸಲೇಮಿನ ಪುತ್ರಿಯರೇ, ನಾನು ಕಪ್ಪಾದವಳು ಆದರೂ ಸುಂದರಿ. ಕೇದಾರಿನ ಗುಡಾರಗಳಂತೆಯೂ, ಸೊಲೊಮೋನನ ಡೇರೆಯ ತೆರೆಗಳಂತೆಯೂ ಚೆಲುವೆ.</verse>
				<verse number="6">ನನ್ನನ್ನು ದಿಟ್ಟಿಸಿ ನೋಡಬೇಡಿರಿ. ನಾನು ಸೂರ್ಯನ ದೃಷ್ಟಿಗೆ ಬಿದ್ದು ಕಪ್ಪಾಗಿದ್ದೇನೆ. ನನ್ನ ಸಹೋದರರು ನನ್ನ ಮೇಲೆ ಕೋಪಮಾಡಿಕೊಂಡು, ದ್ರಾಕ್ಷಿತೋಟಗಳನ್ನು ಕಾಯಲು ನನ್ನನ್ನು ನೇಮಿಸಿದರು. ಆದರೆ ನನ್ನ ಸ್ವಂತ ದ್ರಾಕ್ಷಿತೋಟವನ್ನು ನಾನು ಅಲಕ್ಷ್ಯ ಮಾಡಬೇಕಾಯಿತು.</verse>
				<verse number="7">ನನ್ನ ಪ್ರಾಣ ಪ್ರಿಯನೇ, ನೀನು ನಿನ್ನ ಮಂದೆಯನ್ನು ಮೇಯಿಸುವುದು ಎಲ್ಲಿ? ಮಧ್ಯಾಹ್ನದಲ್ಲಿ ನೀನು ವಿಶ್ರಮಿಸಿಕೊಳ್ಳುವ ಸ್ಥಳ ಎಲ್ಲಿ? ನನಗೆ ತಿಳಿಸು. ನಾನು ನಿನ್ನ ಜೊತೆಗಾರರ ಮಂದೆಗಳ ಬಳಿಯಲ್ಲಿ ಮುಸುಕು ಹಾಕಿದವಳಂತೆ ಏಕೆ ಅಲೆಯಬೇಕು?</verse>
				<verse number="8">ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನಿನಗೆ ಗೊತ್ತಿಲ್ಲವಾದರೆ, ನೀನು ಮಂದೆಯ ಜಾಡಿನಲ್ಲಿಯೇ ಹೋಗಿ, ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಯ ಮರಿಗಳನ್ನು ಮೇಯಿಸು.</verse>
				<verse number="9">ನನ್ನ ಪ್ರಿಯಳೇ, ಫರೋಹನ ರಥಕ್ಕೆ ಕಟ್ಟಿದ ಕುದುರೆಗೆ ನಿನ್ನನ್ನು ಹೋಲಿಸಿದ್ದೇನೆ.</verse>
				<verse number="10">ನಿನ್ನ ಕೆನ್ನೆಗಳು ಆಭರಣಗಳ ಸಾಲಿನಿಂದಲೂ, ನಿನ್ನ ಕೊರಳು ಕಂಠ ಮಾಲೆಗಳಿಂದಲೂ ರಮ್ಯವಾಗಿವೆ.</verse>
				<verse number="11">ನಾವು ನಿನಗೋಸ್ಕರ ಬಂಗಾರದ ಕಿವಿಯೋಲೆಗಳನ್ನು ಬೆಳ್ಳಿಯ ಸರಪಳಿಗಳೊಂದಿಗೆ ಮಾಡಿಸುವೆವು.</verse>
				<verse number="12">ಅರಸನು ಮೇಜಿನ ಬಳಿಯಲ್ಲಿ ಕೂತಿದ್ದಾಗ, ನನ್ನ ಪರಿಮಳ ತೈಲವು ಸುವಾಸನೆಯನ್ನು ಬೀರುತ್ತಿತ್ತು.</verse>
				<verse number="13">ನನ್ನ ಪ್ರಿಯತಮನು ನನ್ನ ಸ್ತನಗಳ ಮಧ್ಯದಲ್ಲಿ ವಿಶ್ರಾಂತಿ ಪಡೆಯುವ ರಕ್ತಬೋಳದ ಚೀಲದಂತಿರುವನು.</verse>
				<verse number="14">ನನ್ನ ಪ್ರಿಯನು ನನಗೆ ಏನ್ಗೆದಿಯ ದ್ರಾಕ್ಷಿ ತೋಟಗಳಲ್ಲಿರುವ ಗೋರಂಟಿ ಹೂಗೊಂಚಲಿನಂತೆ ಇರುವನು.</verse>
				<verse number="15">ನನ್ನ ಪ್ರಿಯಳೇ, ನೀನು ಎಷ್ಟು ಸೌಂದರ್ಯವಂತೆ! ಆಹಾ, ನೀನು ಸೌಂದರ್ಯವಂತಳೇ! ನಿನ್ನ ಕಣ್ಣುಗಳು ಪಾರಿವಾಳಗಳಂತಿವೆ.</verse>
				<verse number="16">ನನ್ನ ಪ್ರಿಯನೇ, ಇಗೋ, ನೀನು ಎಷ್ಟು ಸೌಂದರ್ಯವಂತನು! ಹೌದು, ರಮ್ಯವಾದವನು! ಹಸಿರು ಚಿಗುರುಗಳೇ ನಮ್ಮ ಮಂಚವಾಗಿದೆ.</verse>
				<verse number="17">ನಮ್ಮ ಮನೆಯ ತೊಲೆಗಳು ದೇವದಾರು ಮರಗಳು. ನಮ್ಮ ಮೇಲ್ಛಾವಣಿ ತುರಾಯಿ ಮರಗಳು.</verse>
			</chapter>
			<chapter number="2">
				<verse number="1">ಶಾರೋನಿನ ಗುಲಾಬಿ ಹೂವೂ, ತಗ್ಗಿನ ತಾವರೆಯೂ ನಾನೇ.</verse>
				<verse number="2">ಮುಳ್ಳುಪೊದರಿನ ನಡುವೆ ತಾವರೆಯಂತೆ ನನ್ನ ಪ್ರಿಯಳು ಕನ್ಯಾಮಣಿಗಳಲ್ಲಿ ಶ್ರೇಷ್ಠಳು.</verse>
				<verse number="3">ಅಡವಿಯ ಮರಗಳಲ್ಲಿ ಸೇಬಿನ ಮರದಂತೆ ಯುವಜನರಲ್ಲಿ ನನ್ನ ಪ್ರಿಯನಿದ್ದಾನೆ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತುಕೊಂಡೆನು. ಅವನ ಫಲವು ನನ್ನ ರುಚಿಗೆ ಮಧುರವಾಗಿತ್ತು.</verse>
				<verse number="4">ಅವನು ಔತಣದ ಮನೆಗೆ ನನ್ನನ್ನು ಕರೆದುಕೊಂಡು ಬಂದನು. ನನ್ನ ಮೇಲೆ ಇರುವ ಅವನ ಧ್ವಜವು ಪ್ರೀತಿಯೇ.</verse>
				<verse number="5">ದ್ರಾಕ್ಷೆಯಿಂದ ನನ್ನನ್ನು ಬಲಪಡಿಸು. ಸೇಬು ಹಣ್ಣುಗಳಿಂದ ನನ್ನನ್ನು ಚೇತನಗೊಳಿಸು. ಏಕೆಂದರೆ ನಾನು ಪ್ರೀತಿಯ ದೆಸೆಯಿಂದ ಅಸ್ವಸ್ಥಳಾಗಿದ್ದೇನೆ.</verse>
				<verse number="6">ಅವನ ಎಡಗೈ ನನ್ನ ತಲೆದಿಂಬಾಗಿರಲಿ. ಅವನ ಬಲಗೈ ನನ್ನನ್ನು ಅಪ್ಪಿಕೊಳ್ಳಲಿ.</verse>
				<verse number="7">ಯೆರೂಸಲೇಮಿನ ಪುತ್ರಿಯರೇ, ಮೆಚ್ಚುವ ಕಾಲಕ್ಕೆ ಮುಂಚೆ ನೀವು ಪ್ರೀತಿಯನ್ನು ಎಬ್ಬಿಸಬೇಡಿರಿ. ಎಚ್ಚರಿಸಲೂ ಬೇಡಿರಿ ಎಂದು ಅಡವಿಯ ಹುಲ್ಲೆ ಹರಿಣಿಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.</verse>
				<verse number="8">ನನ್ನ ಪ್ರಿಯನ ಸ್ವರವು! ಇಗೋ! ಅವನು ಪರ್ವತಗಳ ಮೇಲೆ ಹಾರುತ್ತಾ, ಗುಡ್ಡಗಳ ಮೇಲೆ ಜಿಗಿಯುತ್ತಾ ಬರುತ್ತಿದ್ದಾನೆ.</verse>
				<verse number="9">ನನ್ನ ಪ್ರಿಯನು ಜಿಂಕೆಯ ಹಾಗೆ ಇದ್ದಾನೆ. ದುಪ್ಪಿಯ ಮರಿಯ ಹಾಗೆಯೂ ಇದ್ದಾನೆ. ಇಗೋ! ಅವನು ನಮ್ಮ ಗೋಡೆಯ ಹಿಂದೆ ನಿಂತಿದ್ದಾನೆ. ಜಾಲಾಂತರಗಳಲ್ಲಿ ತನ್ನನ್ನು ತೋರಿಸಿ, ಕಿಟಿಕಿಗಳಿಂದ ನೋಡುತ್ತಿದ್ದಾನೆ.</verse>
				<verse number="10">ನನ್ನ ಪ್ರಿಯನು ನನ್ನೊಡನೆ ಮಾತನಾಡಿ ಹೀಗೆಂದನು: “ನನ್ನ ಪ್ರಿಯಳೇ ಎದ್ದು ಬಾ, ನನ್ನ ಸುಂದರಿಯೇ, ಹೊರಟು ಬಾ.</verse>
				<verse number="11">ಇಗೋ! ಚಳಿಗಾಲ ಕಳೆಯಿತು, ಮಳೆ ನಿಂತುಹೋಯಿತು.</verse>
				<verse number="12">ಪುಷ್ಪಗಳು ಭೂಮಿಯ ಮೇಲೆ ಕಾಣಿಸುತ್ತಿವೆ. ಪಕ್ಷಿಗಳು ಹಾಡುವ ಕಾಲ ಬಂತು. ಪಾರಿವಾಳಗಳ ಸ್ವರ ನಮ್ಮ ಊರಲ್ಲಿ ಕೇಳಿಸುತ್ತಿದೆ.</verse>
				<verse number="13">ಅಂಜೂರದ ಕಾಯಿಗಳು ಹಣ್ಣಾಗಿವೆ. ದ್ರಾಕ್ಷಿಬಳ್ಳಿಗಳು ಹೂಬಿಟ್ಟಿವೆ. ಅದರ ಪರಿಮಳ ಹರಡುತ್ತಿದೆ. ಎದ್ದು ಬಾ, ನನ್ನ ಪ್ರಿಯಳೇ, ನನ್ನ ಸುಂದರಿಯೇ, ನನ್ನೊಂದಿಗೆ ಬಾ.”</verse>
				<verse number="14">ಬಂಡೆಯ ಬಿರುಕುಗಳಲ್ಲಿಯೂ ಸಂದುಗಳ ಮರೆಯಲ್ಲಿಯೂ ಇರುವ ನನ್ನ ಪಾರಿವಾಳವೇ ಬಾ. ನಿನ್ನ ಮುಖವನ್ನು ನನಗೆ ತೋರಿಸು. ನಿನ್ನ ಸ್ವರವನ್ನು ನನಗೆ ಕೇಳಿಸು. ನಿನ್ನ ಸ್ವರವು ಇಂಪಾಗಿದೆ. ನಿನ್ನ ಮುಖವು ಸುಂದರವಾಗಿಯೂ ಇದೆ.</verse>
				<verse number="15">ದ್ರಾಕ್ಷಿತೋಟಗಳನ್ನು ಹಾಳುಮಾಡುವ ನರಿಗಳನ್ನೂ ನರಿಮರಿಗಳನ್ನೂ ಹಿಡಿಯಿರಿ. ನಮ್ಮ ದ್ರಾಕ್ಷಿತೋಟಗಳಲ್ಲಿ ಹೂಗಳು ಅರಳಿವೆ.</verse>
				<verse number="16">ನನ್ನ ಪ್ರಿಯನು ನನ್ನವನೇ, ನಾನು ಅವನವಳೇ. ಅವನು ನೆಲದಾವರೆಗಳ ನಡುವೆ ಮಂದೆಯನ್ನು ಮೇಯಿಸುತ್ತಾನೆ.</verse>
				<verse number="17">ನನ್ನ ಪ್ರಿಯನೇ, ಹೊತ್ತು ಮೂಡುವ ಮುಂಚೆ ಕತ್ತಲು ಕವಿಯುವ ಮೊದಲು ಹೊರಟು ಬಾ. ಒರಟಾದ ಪರ್ವತಗಳ ಮೇಲಿರುವ ಜಿಂಕೆಯಂತಿರು. ಹೌದು, ಪ್ರಾಯದ ದುಪ್ಪಿಯಂತೆಯೂ ಇರು.</verse>
			</chapter>
			<chapter number="3">
				<verse number="1">ರಾತ್ರಿಯೆಲ್ಲಾ ನನ್ನ ಹಾಸಿಗೆಯ ಮೇಲಿದ್ದೆನು; ನನ್ನ ಪ್ರಾಣ ಪ್ರಿಯನನ್ನು ಹುಡಕಿದೆನು. ಅವನನ್ನು ಎಷ್ಟು ಹುಡುಕಿದರೂ ಅವನು ಸಿಗಲಿಲ್ಲ.</verse>
				<verse number="2">ನಾನು ಎದ್ದು, ಪಟ್ಟಣವನ್ನು ಸಂಚರಿಸಿ, ಬೀದಿಗಳಲ್ಲಿಯೂ, ಮಾರ್ಗಗಳಲ್ಲಿಯೂ ನನ್ನ ಪ್ರಾಣ ಪ್ರಿಯನನ್ನು ಹುಡುಕಾಡಿದೆನು. ಅವನನ್ನು ಎಷ್ಟು ಹುಡುಕಿದರೂ ಅವನು ಸಿಗಲೇ ಇಲ್ಲ.</verse>
				<verse number="3">ನಾನು ಪಟ್ಟಣವನ್ನು ಕಾಯುವ ಕಾವಲುಗಾರರಿಗೆ ಸಿಕ್ಕಿಬಿದ್ದಾಗ, “ನನ್ನ ಪ್ರಾಣ ಪ್ರಿಯನನ್ನು ನೀವು ಕಂಡಿರಾ?” ಎಂದು ವಿಚಾರಿಸಿದೆ.</verse>
				<verse number="4">ನಾನು ಅವರನ್ನು ಬಿಟ್ಟು ಸ್ವಲ್ಪ ದೂರ ಹೋದ ಮೇಲೆ, ನನ್ನ ಪ್ರಾಣ ಪ್ರಿಯನನ್ನು ಕಂಡುಕೊಂಡೆನು. ನಾನು ಅವನ ಕೈಯನ್ನು ಹಿಡಿದುಕೊಂಡು ನನ್ನ ತಾಯಿಯ ಮನೆಗೆ, ಹೌದು, ನನ್ನ ಹೆತ್ತವಳ ಕೋಣೆಗೆ ಅವನನ್ನು ಬಿಡದೆ ಕರೆದುಕೊಂಡು ಹೋದೆನು.</verse>
				<verse number="5">ಯೆರೂಸಲೇಮಿನ ಪುತ್ರಿಯರೇ, ಮೆಚ್ಚುವ ಕಾಲಕ್ಕೆ ಮುಂಚೆ ನೀವು ಪ್ರೀತಿಯನ್ನು ಎಬ್ಬಿಸಬೇಡಿರಿ. ಎಚ್ಚರಿಸಲೂ ಬೇಡಿರಿ ಎಂದು ಅಡವಿಯ ಹುಲ್ಲೆ ಹರಿಣಿಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.</verse>
				<verse number="6">ರಕ್ತಬೋಳ, ಸಾಂಬ್ರಾಣಿಗಳಿಂದಲೂ ವರ್ತಕರು ಮಾರುವ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮಸ್ತಂಭಗಳಂತೆ ಅಡವಿಯಿಂದ ಬರುವ ಈ ಮೆರವಣೆಗೆ ಯಾರದು?</verse>
				<verse number="7">ನೋಡಿರಿ! ಇದು ಸೊಲೊಮೋನನ ರಥ. ಇಸ್ರಾಯೇಲಿನ ಪರಾಕ್ರಮಶಾಲಿಗಳಲ್ಲಿ ಅರವತ್ತು ಮಂದಿ ಅದರ ಸುತ್ತಲಿದ್ದಾರೆ.</verse>
				<verse number="8">ಯುದ್ಧ ನಿಪುಣರಾದ ಅವರೆಲ್ಲರೂ ಖಡ್ಗ ಹಿಡಿದಿದ್ದಾರೆ. ರಾತ್ರಿಯ ಅಪಾಯದ ನಿಮಿತ್ತ ಪ್ರತಿಯೊಬ್ಬರೂ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದಾರೆ.</verse>
				<verse number="9">ಅರಸನಾದ ಸೊಲೊಮೋನನು ಲೆಬನೋನಿನ ಮರದಿಂದ ಒಂದು ರಥವನ್ನು ತನಗೆ ಮಾಡಿಸಿಕೊಂಡಿದ್ದನು.</verse>
				<verse number="10">ಅವನು ಅದರ ಸ್ತಂಭಗಳನ್ನು ಬೆಳ್ಳಿಯಿಂದಲೂ ಅದರ ಕೆಳಗಿನ ಭಾಗವನ್ನು ಬಂಗಾರದಿಂದಲೂ ಅದರ ಹೊದಿಕೆಯನ್ನು ಧೂಮ್ರವರ್ಣದ ವಸ್ತ್ರದಿಂದಲೂ ಮಾಡಿಸಿದ್ದನು. ಯೆರೂಸಲೇಮಿನ ಪುತ್ರಿಯರು ಪ್ರೀತಿಯಿಂದ ಅದನ್ನು ಅಲಂಕರಿಸಿದ್ದರು.</verse>
				<verse number="11">ಚೀಯೋನಿನ ಪುತ್ರಿಯರೇ, ನೀವು ಹೊರಗೆ ಬನ್ನಿರಿ. ಅರಸನಾದ ಸೊಲೊಮೋನನನ್ನು ನೋಡಿರಿ. ಅವನ ಮದುವೆಯ ದಿನದಂದು, ಅವನ ಹೃದಯ ಸಂತೋಷಗೊಂಡ ದಿನದಲ್ಲಿ, ಅವನ ತಾಯಿ ಅವನಿಗೆ ತೊಡಿಸಿದ ಕಿರೀಟವನ್ನು ಅವನು ಧರಿಸಿರುವುದನ್ನು ಬಂದು ನೋಡಿರಿ.</verse>
			</chapter>
			<chapter number="4">
				<verse number="1">ಇಗೋ, ನನ್ನ ಪ್ರಿಯಳೇ, ನೀನು ಎಷ್ಟು ಸುಂದರಿ! ಆಹಾ, ನೀನು ಎಷ್ಟು ಸುಂದರಿಯು. ನಿನ್ನ ಮುಸುಕಿನೊಳಗಿನ ನಿನ್ನ ಕಣ್ಣುಗಳು ಪಾರಿವಾಳಗಳೇ. ನಿನ್ನ ತಲೆಕೂದಲು ಗಿಲ್ಯಾದಿನ ಪರ್ವತದಿಂದ ಇಳಿದು ಬರುವ ಮೇಕೆ ಮಂದೆಯ ಹಾಗೆ ಇದೆ.</verse>
				<verse number="2">ನಿನ್ನ ಹಲ್ಲುಗಳ ಹೊಳಪು ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಗೆ ಸಮಾನ. ಅವು ಜೊತೆಯಾಗಿಯೇ ಇರುತ್ತವೆ. ಅವುಗಳಲ್ಲಿ ಒಂದೂ ಒಂಟಿಯಾಗಿರದು.</verse>
				<verse number="3">ನಿನ್ನ ತುಟಿ ಕೆಂಪು ದಾರದ ಹಾಗೆ ಇವೆ. ನಿನ್ನ ಮಾತು ರಮ್ಯ. ಮುಸುಕಿನೊಳಗಿನ ನಿನ್ನ ಕೆನ್ನೆ ವಿಭಾಗಿಸಿದ ದಾಳಿಂಬೆಯ ಹಣ್ಣಿನ ಹಾಗೆ ಇದೆ.</verse>
				<verse number="4">ನಿನ್ನ ಕೊರಳು ದಾವೀದನ ಆಯುಧ ಶಾಲೆಗೋಸ್ಕರ ಕಟ್ಟಿಸಲಾದ ಬುರುಜಿನ ಹಾಗೆ ಇದೆ. ಅದರಲ್ಲಿ ಶೂರರ ಸಾವಿರ ಗುರಾಣಿಗಳು ತೂಗುಹಾಕಿ ಇವೆ.</verse>
				<verse number="5">ನಿನ್ನ ಎರಡು ಸ್ತನಗಳು ನೆಲದಾವರೆಯ ನಡುವೆ ಮೇಯುವ ಹುಲ್ಲೆಯ ಅವಳಿಮರಿಗಳ ಹಾಗಿವೆ.</verse>
				<verse number="6">ಹೊತ್ತು ಮೂಡುವವರೆಗೂ ನೆರಳು ಓಡಿ ಹೋಗುವವರೆಗೂ ನಾನು ರಕ್ತಬೋಳದ ಪರ್ವತಕ್ಕೂ ಸಾಂಬ್ರಾಣಿಯ ಗುಡ್ಡಕ್ಕೂ ಹೋಗುವೆನು.</verse>
				<verse number="7">ನನ್ನ ಪ್ರಿಯಳೇ, ನೀನು ಪೂರ್ಣ ಸುಂದರಿ, ನಿನ್ನಲ್ಲಿ ದೋಷವೇನೂ ಇಲ್ಲ.</verse>
				<verse number="8">ಬಾ, ವಧುವೇ, ಲೆಬನೋನಿನಿಂದ ಬಾ, ಲೆಬನೋನಿನಿಂದ ನನ್ನೊಡನೆ ಬಾ. ಅಮಾನದ ಶಿಖರಗಳಿಂದ, ಸೆನೀರ್, ಹೆರ್ಮೋನ್ ಶಿಖರಗಳಿಂದ, ಸಿಂಹದ ಗವಿಗಳಿಂದ, ಚಿರತೆಗಳ ಪರ್ವತಗಳಿಂದ ಇಳಿದು ಬಾ.</verse>
				<verse number="9">ನನ್ನ ಹೃದಯವನ್ನು ನೀನು ಸೆಳಕೊಂಡಿರುವೆ. ನನ್ನ ಪ್ರಿಯಳೇ, ನನ್ನ ವಧುವೇ, ನೀನು ನಿನ್ನ ಒಂದೇ ಕಿರುನೋಟದಿಂದಲೂ, ನಿನ್ನ ಕೊರಳಿನ ಒಂದೇ ಕಂಠ ಹಾರದಿಂದಲೂ, ನನ್ನ ಹೃದಯವನ್ನು ಸೆಳಕೊಂಡಿರುವೆ.</verse>
				<verse number="10">ನನ್ನ ಪ್ರಿಯಳೇ, ವಧುವೇ! ನಿನ್ನ ಪ್ರೀತಿಯು ಎಷ್ಟೋ ಚೆಂದ. ನಿನ್ನ ಪ್ರೀತಿಯು ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ಎಲ್ಲಾ ಸುಗಂಧಗಳಿಗಿಂತ ನಿನ್ನ ತೈಲದ ಸುವಾಸನೆಯು ಎಷ್ಟೋ ಉತ್ತಮ!</verse>
				<verse number="11">ನನ್ನ ವಧುವೇ, ನಿನ್ನ ತುಟಿಗಳಿಂದ ಜೇನು ಸುರಿಯುತ್ತಿದೆ. ಹಾಲೂ, ಜೇನೂ ನಿನ್ನ ನಾಲಿಗೆ ಅಡಿಯಲ್ಲಿವೆ. ನಿನ್ನ ವಸ್ತ್ರಗಳ ಸುವಾಸನೆಯು ಲೆಬನೋನಿನ ಸುಗಂಧದಂತಿದೆ.</verse>
				<verse number="12">ನನ್ನ ಪ್ರಿಯಳೇ, ನನ್ನ ವಧುವೇ, ನೀನು ಭದ್ರ ತೋಟವೂ ಬೇಲಿಯೊಳಗಿನ ಬುಗ್ಗೆಯೂ ಮುದ್ರಿಸಿದ ಬಾವಿಯೂ ಆಗಿರುವೆ.</verse>
				<verse number="13">ನಿನ್ನ ತೋಟದಲ್ಲಿ ದಾಳಿಂಬೆ ವನವೂ ಫಲಕೊಡುವ ಉತ್ತಮ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಇವೆ.</verse>
				<verse number="14">ಜಟಾಮಾಂಸಿ ಅಷ್ಟೇ ಅಲ್ಲದೆ ಕೇಸರಿಯೂ ಬಜೆಯೂ ದಾಲ್ಚಿನ್ನಿಯೂ ಸಕಲ ಸಾಂಬ್ರಾಣಿ ಗಿಡಮೂಲಿಕೆಗಳೂ ರಕ್ತಬೋಳವೂ ಅಗರೂ ಸಕಲವಿಧ ಶ್ರೇಷ್ಠ ಸುಗಂಧ ದ್ರವ್ಯಗಳೂ ಬೆಳೆದಿವೆ.</verse>
				<verse number="15">ನೀನು ತೋಟದ ಬುಗ್ಗೆಯೂ ಉಕ್ಕಿಬರುವ ಒರತೆಯೂ ಲೆಬನೋನಿನಿಂದ ಹರಿಯುವ ಹೊಳೆಯೂ ಆಗಿರುವೆ.</verse>
				<verse number="16">ಉತ್ತರಗಾಳಿಯೇ, ಬೀಸು, ದಕ್ಷಿಣ ಗಾಳಿಯೇ ಬಾ ನನ್ನ ತೋಟದ ಮೇಲೆ ಬೀಸು. ಸುಗಂಧ ಸುವಾಸನೆ ಹರಡಲಿ. ನನ್ನ ಪ್ರಿಯನು ತನ್ನ ತೋಟಕ್ಕೆ ಬಂದು ಉತ್ತಮ ಫಲಗಳನ್ನು ರುಚಿಸಲಿ.</verse>
			</chapter>
			<chapter number="5">
				<verse number="1">ನನ್ನ ಪ್ರಿಯಳೇ, ನನ್ನ ವಧುವೇ, ನಾನು ನನ್ನ ತೋಟಕ್ಕೆ ಬಂದಿರುವೆ. ನನ್ನ ರಕ್ತಬೋಳ ಸುಗಂಧಗಳನ್ನೂ ಕೂಡಿಸಿರುವೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ. ಸ್ನೇಹಿತರೇ, ಊಟಮಾಡಿರಿ, ಕುಡಿಯಿರಿ. ಹೌದು ಪ್ರಿಯರೇ, ಸಮೃದ್ಧಿಯಾಗಿ ಪಾನಮಾಡಿರಿ.</verse>
				<verse number="2">ನಾನು ನಿದ್ರಿಸುತ್ತಿದ್ದರೂ, ನನ್ನ ಹೃದಯವು ಎಚ್ಚರವಾಗಿತ್ತು. ಇಗೋ! ಬಾಗಿಲು ತಟ್ಟುವ ನನ್ನ ಪ್ರಿಯನ ಶಬ್ದವಿದು: “ನನ್ನ ಪ್ರಿಯಳೇ, ನನ್ನ ವಧುವೇ, ನನ್ನ ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ! ನನ್ನ ತಲೆ ಮಂಜಿನಿಂದ ನೆನೆದಿದೆ. ನನ್ನ ಕೂದಲು ರಾತ್ರಿಯ ಹನಿಗಳಿಂದ ತೋಯ್ದಿದೆ.”</verse>
				<verse number="3">ನಾನು ನನ್ನ ಅಂಗಿಯನ್ನು ತೆಗೆದು ಹಾಕಿರಲು, ಅದನ್ನು ಮತ್ತೆ ಹಾಕಿಕೊಳ್ಳುವುದು ಹೇಗೆ? ನಾನು ನನ್ನ ಕಾಲುಗಳನ್ನು ತೊಳೆದುಕೊಂಡಿರಲು, ನಾನು ಮತ್ತೆ ಅವುಗಳನ್ನು ಕೊಳೆ ಮಾಡುವುದು ಹೇಗೆ?</verse>
				<verse number="4">ಅನಂತರ ನನ್ನ ಪ್ರಿಯನು ಬಾಗಿಲ ಸಂದಿನಲ್ಲಿ ತನ್ನ ಕೈ ಹಾಕಿದನು. ನನ್ನ ಹೃದಯವು ಅವನಿಗಾಗಿ ಮಿಡಿಯಿತು.</verse>
				<verse number="5">ನಾನು ನನ್ನ ಪ್ರಿಯನಿಗೆ ಬಾಗಿಲು ತೆರೆಯಲು ಎದ್ದಾಗ, ಬೀಗದ ಹಿಡಿಗಳ ಮೇಲೆ ನನ್ನ ಕೈಗಳಿಂದ ರಕ್ತಬೋಳವು ತೊಟ್ಟಿಕ್ಕಿತು. ನನ್ನ ಬೆರಳುಗಳಿಂದಲೂ ರಕ್ತಬೋಳವು ಸುರಿಯಿತು.</verse>
				<verse number="6">ನಾನು ನನ್ನ ಪ್ರಿಯನಿಗೆ ಬಾಗಿಲು ತೆರೆದೆನು. ಆದರೆ ಅಷ್ಟರಲ್ಲಿ ನನ್ನ ಪ್ರಿಯನು ಹಿಂದಿರುಗಿ ಹೋಗಿಬಿಟ್ಟಿದ್ದನು. ಅವನು ಹೋಗಿದ್ದರಿಂದ ನನ್ನ ಹೃದಯ ಕುಗ್ಗಿಹೋಯಿತು. ಅವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ. ಅವನನ್ನು ಕರೆದೆನು, ಉತ್ತರವೇ ಇಲ್ಲ.</verse>
				<verse number="7">ಪಟ್ಟಣದಲ್ಲಿ ಸಂಚರಿಸುವ ಕಾವಲುಗಾರರು ನನ್ನನ್ನು ಕಂಡುಹಿಡಿದರು. ನನ್ನನ್ನು ಹೊಡೆದು, ಗಾಯ ಮಾಡಿದರು. ಗೋಡೆಗಳನ್ನು ಕಾಯುವವರು ನನ್ನ ಮುಸುಕನ್ನು ಕಸಿದುಕೊಂಡರು.</verse>
				<verse number="8">ಯೆರೂಸಲೇಮಿನ ಪುತ್ರಿಯರೇ, ನಿಮಗೆ ಆಣೆಯಿಟ್ಟು ಹೇಳುತ್ತೇನೆ. ನೀವು ನನ್ನ ಪ್ರಿಯನನ್ನು ಕಂಡರೆ, ನಾನು ಪ್ರೀತಿಯಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ.</verse>
				<verse number="9">ಸ್ತ್ರೀಯರಲ್ಲಿ ಅತಿ ಸುಂದರಿಯೇ, ಬೇರೆಯವರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯವೇನು? ನೀನು ನಮಗೆ ಹೀಗೆ ಆಣೆ ಇಡುವುದಕ್ಕೆ ಬೇರೆಯವರ ಪ್ರಿಯರಿಗಿಂತ ನಿನ್ನ ಪ್ರಿಯನ ವಿಶೇಷವೇನು?</verse>
				<verse number="10">ನನ್ನ ಪ್ರಿಯನು, ತೇಜೋಮಯನು, ಕೆಂಪೂ ಬಣ್ಣವುಳ್ಳವನು. ಹತ್ತು ಸಾವಿರ ಜನರಲ್ಲಿ ಶ್ರೇಷ್ಠನು.</verse>
				<verse number="11">ಅವನ ತಲೆಯು ಚೊಕ್ಕ ಬಂಗಾರದಂತಿದೆ. ಅವನ ಗುಂಗುರು ಕೂದಲು ಕಾಗೆಯಂತೆ ಕಪ್ಪಾಗಿದೆ.</verse>
				<verse number="12">ಅವನ ಕಣ್ಣುಗಳು ತುಂಬುತೊರೆಗಳ ಬಳಿ ತಂಗುವ, ಹಾಲಿನಿಂದ ತೊಳೆದಿರುವ, ಪಾರಿವಾಳಗಳ ಕಣ್ಣುಗಳಂತಿವೆ.</verse>
				<verse number="13">ಅವನ ಕೆನ್ನೆಗಳು ಸುಗಂಧ ಸಸ್ಯಗಳು ಬೆಳೆಯುವ ದಿಬ್ಬಗಳಂತಿವೆ. ಅವನ ತುಟಿಗಳು ಸುಗಂಧ ರಕ್ತಬೋಳವನ್ನು ಸುರಿಸುವ ಕೆಂದಾವರೆಗಳು.</verse>
				<verse number="14">ಅವನ ಕೈಗಳು ಗೋಮೇಧಿಕ ರತ್ನದ ಬಂಗಾರದ ಸಲಾಕೆಗಳಂತಿವೆ. ಅವನ ದೇಹ ಇಂದ್ರನೀಲಗಳಿಂದ ಹೊಳೆಯುವ ದಂತದ ಹಾಗೆ ಇದೆ.</verse>
				<verse number="15">ಅವನ ಕಾಲುಗಳು ಶುದ್ಧ ಬಂಗಾರದ ಮೇಲೆ ನಿಂತಿರುವ ಚಂದ್ರಕಾಂತ ಸ್ತಂಭಗಳು. ಅವನ ತೋರಿಕೆಯು ಲೆಬನೋನಿನ ದೇವದಾರುಗಳ ಹಾಗೆ ಶ್ರೇಷ್ಠವಾಗಿವೆ.</verse>
				<verse number="16">ಅವನ ಬಾಯಿ ಮಾತು ಬಹು ಮಧುರ. ಹೌದು, ಅವನು ಸರ್ವಾಂಗ ಸುಂದರ. ಯೆರೂಸಲೇಮಿನ ಪುತ್ರಿಯರೇ, ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು.</verse>
			</chapter>
			<chapter number="6">
				<verse number="1">ನಿನ್ನ ಪ್ರಿಯನು ಎಲ್ಲಿಗೆ ಹೋದನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಾವು ಅವನನ್ನು ನಿನ್ನ ಸಂಗಡ ಹುಡುಕುವಂತೆ ನಿನ್ನ ಪ್ರಿಯನು ಯಾವ ಕಡೆಗೆ ಹೋಗಿದ್ದಾನೆ?</verse>
				<verse number="2">ನನ್ನ ಪ್ರಿಯನು ತೋಟಗಳಲ್ಲಿ ಮಂದೆ ಮೇಯಿಸುವುದಕ್ಕೂ, ನೆಲದಾವರೆಗಳನ್ನು ಕೊಯ್ದು ತರುವುದಕ್ಕೂ, ಸುಗಂಧ ಸಸ್ಯಗಳಿರುವ ಉದ್ಯಾನವನಕ್ಕೆ ಹೋಗಿದ್ದಾನೆ.</verse>
				<verse number="3">ನನ್ನ ಪ್ರಿಯನು ನನ್ನವನೇ, ನಾನು ಅವನವಳೇ. ಅವನು ನೆಲದಾವರೆಗಳ ನಡುವೆ ಮಂದೆಯನ್ನು ಮೇಯಿಸುತ್ತಾನೆ.</verse>
				<verse number="4">ನನ್ನ ಪ್ರಿಯಳೇ, ನೀನು ತಿರ್ಚ ನಗರದಂತೆ ಸುಂದರಿ, ಯೆರೂಸಲೇಮಿನ ಹಾಗೆ ರಮ್ಯಳು, ಧ್ವಜಗಳಿರುವ ದಂಡಿನ ಹಾಗೆ ಗಂಭೀರಳೂ ಆಗಿರುವೆ.</verse>
				<verse number="5">ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು, ಏಕೆಂದರೆ ಅವು ನನ್ನನ್ನು ಜಯಿಸಿವೆ. ನಿನ್ನ ತಲೆಗೂದಲು ಗಿಲ್ಯಾದ್ ಪರ್ವತದಿಂದ ಇಳಿಯುವ ಮೇಕೆಯ ಮಂದೆಯಂತಿದೆ.</verse>
				<verse number="6">ನಿನ್ನ ಹಲ್ಲುಗಳ ಹೊಳಪು ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಗೆ ಸಮಾನ. ಅವು ಜೊತೆಯಾಗಿಯೇ ಇರುತ್ತವೆ. ಅವುಗಳಲ್ಲಿ ಒಂದೂ ಒಂಟಿಯಾಗಿರದು.</verse>
				<verse number="7">ಮುಸುಕಿನೊಳಗಿನ ನಿನ್ನ ಕೆನ್ನೆ ವಿಭಾಗಿಸಿದ ದಾಳಿಂಬೆಯ ಹಣ್ಣಿನ ಹಾಗೆ ಇದೆ.</verse>
				<verse number="8">ಅರಸನಿಗೆ ಅರವತ್ತು ಮಂದಿ ರಾಣಿಯರೂ ಎಂಬತ್ತು ಮಂದಿ ಉಪಪತ್ನಿಯರೂ ಲೆಕ್ಕವಿಲ್ಲದ ಕನ್ಯೆಯರೂ ಇದ್ದಾರೆ.</verse>
				<verse number="9">ಆದರೆ ನನಗೆ ನನ್ನ ಪಾರಿವಾಳವು, ನನ್ನ ಪರಿಪೂರ್ಣಳು ಒಬ್ಬಳೇ. ಇವಳು ತನ್ನ ತಾಯಿಗೆ ಒಬ್ಬಳೇ ಮಗಳು. ತನ್ನ ಹೆತ್ತವಳಿಗೆ ಪ್ರಿಯಳು. ಕನ್ನಿಕೆಯರು ಇವಳನ್ನು ಕಂಡು ಆಶೀರ್ವದಿಸಿದರು. ಹೌದು, ರಾಣಿಯರೂ ಉಪಪತ್ನಿಯರೂ ಇವಳನ್ನು ಹೀಗೆಂದು ಹೊಗಳಿದರು:</verse>
				<verse number="10">ಮೆರವಣೆಗೆಯಲ್ಲಿ ನಕ್ಷತ್ರಗಳ ಹಾಗೆ ಗಂಭೀರಳೂ, ಚಂದ್ರನ ಹಾಗೆ ಸುಂದರಿಯೂ, ಸೂರ್ಯನ ಹಾಗೆ ಪ್ರಕಾಶಿಸುವವಳೂ ಆಗಿರುವ ಈ ಉದಯವಂತೆ ಯಾರು?</verse>
				<verse number="11">ದ್ರಾಕ್ಷಿಬಳ್ಳಿಯು ಚಿಗುರಿದೆಯೋ, ದಾಳಿಂಬೆ ಗಿಡ ಹೂಬಿಟ್ಟಿದೆಯೋ ಎಂದು ಕಣಿವೆಯಲ್ಲಿನ ಫಲಗಳನ್ನು ನೋಡಲು ನಾನು ಬಾದಾಮಿಯ ತೋಟಕ್ಕೆ ಹೋದೆನು.</verse>
				<verse number="12">ನಾನು ಅದನ್ನು ಅರಿತುಕೊಳ್ಳುವ ಮೊದಲು, ನನ್ನ ಆಸೆ ನನ್ನ ಜನ ಪ್ರಧಾನರ ನಡುವೆ ರಥದ ಮೇಲೆ ಕೂತಿರುವಂತೆ ನನ್ನನ್ನು ನಡೆಸಿತು.</verse>
				<verse number="13">ತಿರುಗಿ ಬಾ, ತಿರುಗಿ ಬಾ, ಶೂಲಮ್ ಊರಿನವಳೇ, ನಾವು ನಿನ್ನನ್ನು ನೋಡುವಂತೆ ತಿರುಗಿ ಬಾ, ತಿರುಗಿ ಬಾ! ಎರಡು ಗುಂಪಿನ ನರ್ತಕಿಯರ ನಡುವೆ ಕುಣಿಯುತ್ತಿರುವ, ಶೂಲಮ್ ಊರಿನವಳನ್ನು ನೀವು ನೋಡುವುದೇಕೆ?</verse>
			</chapter>
			<chapter number="7">
				<verse number="1">ಓ ರಾಜಪುತ್ರಿಯೇ! ಕೆರಗಳನ್ನು ಮೆಟ್ಟಿರುವ ನಿನ್ನ ಪಾದಗಳು ಎಷ್ಟು ಸುಂದರವಾಗಿವೆ! ನಿನ್ನ ಅಂದದ ಕಾಲುಗಳು ಶಿಲ್ಪಿಯ ಕೈಕೆಲಸದ ಆಭರಣಗಳಂತಿವೆ.</verse>
				<verse number="2">ನಿನ್ನ ಹೊಕ್ಕಳು ಮಿಶ್ರಪಾನಕ ತುಂಬಿದ ದುಂಡು ಬಟ್ಟಲಿನ ಹಾಗಿದೆ. ನಿನ್ನ ಹೊಟ್ಟೆ ನೆಲದಾವರೆಗಳಿಂದ ಸುತ್ತಿಕೊಂಡಿರುವ ಹೂವುಗಳು ಸುತ್ತಿಕೊಂಡಿರುವ ಗೋಧಿಯ ರಾಶಿಯಾಗಿದೆ.</verse>
				<verse number="3">ನಿನ್ನ ಸ್ತನಗಳೆರಡೂ ಹುಲ್ಲೆಯ ಅವಳಿಮರಿಗಳ ಹಾಗಿವೆ.</verse>
				<verse number="4">ನಿನ್ನ ಕೊರಳು ದಂತದ ಗೋಪುರ. ನಿನ್ನ ಕಣ್ಣುಗಳು ಬತ್ ರಬ್ಬೀಮ್ ಬಾಗಿಲ ಬಳಿಯಲ್ಲಿರುವ ಹೆಷ್ಬೋನಿನ ಕೊಳಗಳು. ನಿನ್ನ ಮೂಗು, ದಮಸ್ಕದ ಕಡೆಗಿರುವ ಲೆಬನೋನಿನ ಗೋಪುರದ ಹಾಗಿದೆ.</verse>
				<verse number="5">ನಿನ್ನ ತಲೆಯು ಕರ್ಮೆಲ್ ಬೆಟ್ಟದಂತೆ ವೈಭವ. ನಿನ್ನ ತಲೆಕೂದಲು ಧೂಮ್ರ ಬಣ್ಣದ ಹಾಗೆ ಇದೆ. ಹೆಣೆದ ಆ ಜಡೆಯಿಂದ ಅರಸನಿಗೂ ಆಕರ್ಷಣ.</verse>
				<verse number="6">ನನ್ನ ಪ್ರೇಮವೇ, ನೀನು ನಿನ್ನ ಹರ್ಷದಿಂದ ಎಷ್ಟೋ ಸುಂದರಿಯೂ ಎಷ್ಟೋ ಮನೋಹರಳೂ ಆಗಿರುವೆ.</verse>
				<verse number="7">ನಿನ್ನ ನೀಳ ಆಕಾರವು ಖರ್ಜೂರ ಮರದಂತಿದೆ. ನಿನ್ನ ಸ್ತನಗಳು ಅದರ ಗೊಂಚಲುಗಳು.</verse>
				<verse number="8">ನಾನು, “ಆ ಖರ್ಜೂರದ ಮರವನ್ನು ಹತ್ತಿ ಅದರ ಗರಿಗಳನ್ನು ಹಿಡಿಯುವೆ,” ಎಂದುಕೊಂಡೆನು. ನಿನ್ನ ಸ್ತನಗಳು ದ್ರಾಕ್ಷಿ ಗೊಂಚಲುಗಳಂತಿರಲಿ, ನಿನ್ನ ಉಸಿರು ಸೇಬು ಹಣ್ಣಿನ ಪರಿಮಳದಂತೆಯೂ ಇರಲಿ.</verse>
				<verse number="9">ನಿನ್ನ ಬಾಯಿಯ ಮುದ್ದುಗಳು ಉತ್ತಮ ದ್ರಾಕ್ಷಾರಸದ ಹಾಗಿರಲಿ. ನನ್ನ ಪ್ರಿಯಕರನ ತುಟಿ, ಹಲ್ಲುಗಳಲ್ಲಿ ದ್ರಾಕ್ಷಾರಸವು ನೇರವಾಗಿ ಹರಿದು ಇಂಪಾಗಿ ರುಚಿಸಲಿ.</verse>
				<verse number="10">ನಾನು ನನ್ನ ಪ್ರಿಯನವಳು. ಅವನ ಆಸೆಯು ನನ್ನ ಕಡೆಗಿರುವುದು.</verse>
				<verse number="11">ನನ್ನ ಪ್ರಿಯನೇ, ಬಾ ಹೋಗೋಣ. ನಾವು ಗ್ರಾಮಗಳಲ್ಲಿ ವಸತಿಯಾಗಿರೋಣ ಬಾ.</verse>
				<verse number="12">ನಾವು ಬೆಳಗ್ಗೆ ಹೊರಟು, ದ್ರಾಕ್ಷಿ ತೋಟಗಳಿಗೆ ಹೋಗೋಣ ಬಾ. ದ್ರಾಕ್ಷಿ ಚಿಗುರಿದೆಯೋ, ಅದರ ಹೂ ಅರಳಿದೆಯೋ ದಾಳಿಂಬೆ ಹೂಬಿಟ್ಟಿದೆಯೋ ನೋಡೋಣ ಬಾ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಅರ್ಪಿಸುವೆನು.</verse>
				<verse number="13">ನನ್ನ ಪ್ರಿಯನೇ, ಕಾಮಜನಕ ವೃಕ್ಷಗಳು ಪರಿಮಳ ಬೀರುತ್ತಿವೆ. ನಮ್ಮ ಬಾಗಿಲ ಬಳಿಯಲ್ಲಿ ನಿನಗೋಸ್ಕರ ನಾನು ರುಚಿಯುಳ್ಳ ಮಾಗಿದ ಹೊಸ ಹಣ್ಣುಗಳನ್ನು ಸಿದ್ಧಪಡಿಸಿದ್ದೇನೆ.</verse>
			</chapter>
			<chapter number="8">
				<verse number="1">ನೀನು ನನ್ನ ತಾಯಿಯ ಹಾಲು ಕುಡಿದ ನನ್ನ ಅಣ್ಣನಾಗಿದ್ದರೆ, ಎಷ್ಟೋ ಚೆನ್ನಾಗಿರುತ್ತಿತ್ತು! ನಾನು ನಿನ್ನನ್ನು ಕಂಡು ಹೊರಗೆಯೇ ನಿನಗೆ ಮುದ್ದಿಡುತ್ತಿದ್ದೆ. ಆಗ ಯಾರೂ ನನ್ನನ್ನು ನಿಂದಿಸುತ್ತಿರಲಿಲ್ಲ.</verse>
				<verse number="2">ನಿನ್ನನ್ನು ನನ್ನ ತಾಯಿಯ ಮನೆಗೆ ಕರೆದುಕೊಂಡು ಹೋಗುತ್ತಿದ್ದೆನು. ಅಲ್ಲಿ ನೀನು ನನಗೆ ಉಪದೇಶ ಮಾಡಬಹುದಾಗಿತ್ತು. ನಾನು ದ್ರಾಕ್ಷಿ ಮಿಶ್ರಪಾನಕವನ್ನು ಕೊಡುತ್ತಿದ್ದೆನು. ದಾಳಿಂಬೆ ರಸವನ್ನು ನಿನಗೆ ಕುಡಿಸುತ್ತಿದ್ದೆನು.</verse>
				<verse number="3">ನಿನ್ನ ಎಡಗೈ ನನ್ನ ತಲೆದಿಂಬಾಗಿರಲಿ. ನಿನ್ನ ಬಲಗೈ ನನ್ನನ್ನು ಅಪ್ಪಿಕೊಳ್ಳಲಿ.</verse>
				<verse number="4">ಯೆರೂಸಲೇಮಿನ ಪುತ್ರಿಯರೇ, ಮೆಚ್ಚುವ ಕಾಲಕ್ಕೆ ಮುಂಚೆ ನೀವು ಪ್ರೀತಿಯನ್ನು ಎಬ್ಬಿಸಬೇಡಿರಿ, ಎಚ್ಚರಿಸಲೂ ಬೇಡಿರಿ ಎಂದು ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.</verse>
				<verse number="5">ತನ್ನ ಪ್ರಿಯನನ್ನು ಒರಗಿಕೊಂಡು ಅಡವಿಯಿಂದ ಬರುವ ಇವಳು ಯಾರು? ಸೇಬುಗಿಡದ ಕೆಳಗೆ ನಿನ್ನನ್ನು ಪ್ರೇರಿಸಿದೆನು. ಅದು ನಿನ್ನ ತಾಯಿ ನಿನ್ನನ್ನು ಗರ್ಭಧರಿಸಿದ ಸ್ಥಳ. ಅಲ್ಲಿ ನಿನ್ನ ತಾಯಿ ಪ್ರಸವವೇದನೆಯಿಂದ ನಿನ್ನನ್ನು ಹಡೆದಳು.</verse>
				<verse number="6">ನನ್ನನ್ನು ನಿನ್ನ ಹೃದಯದ ಮೇಲೆ ಒಂದು ಮುದ್ರೆಯಾಗಿ ಧರಿಸಿಕೋ. ನಾನು ನಿನ್ನ ಕೈಮೇಲೆ ಒಂದು ಮುದ್ರೆಯಾಗಿರುವೆ. ಪ್ರೀತಿಯು ಮರಣದಷ್ಟು ಬಲವಾಗಿದೆ. ಮತ್ಸರವು ಸಮಾಧಿಯಷ್ಟು ಕ್ರೂರ. ಪ್ರೀತಿಯು ಉರಿಯುವ ಬೆಂಕಿ ಪ್ರಜ್ವಲಿಸುವ ಜ್ವಾಲೆಯ ಹಾಗಿರುವುದು.</verse>
				<verse number="7">ಜಲರಾಶಿಗಳು ಪ್ರೀತಿಯನ್ನು ನಂದಿಸಲಾರವು. ಪ್ರವಾಹಗಳು ಸಹ ಪ್ರೀತಿಯನ್ನು ಮುಳುಗಿಸಲಾರವು. ಒಬ್ಬನು ತನ್ನ ಆಸ್ತಿಯನ್ನೆಲ್ಲಾ ಪ್ರೀತಿಗೋಸ್ಕರ ಕೊಟ್ಟರೂ, ಆ ಪ್ರೀತಿಗೆ ಬದಲಾಗಿ ಅಂಥವನಿಗೆ ಸಂಪೂರ್ಣ ನಿಂದೆಯೇ ಸಿಗುವುದು.</verse>
				<verse number="8">ಪ್ರಾಯಕ್ಕೆ ಬಾರದ ತಂಗಿ ಒಬ್ಬಳು ನಮಗಿದ್ದಾಳೆ. ಅವಳನ್ನು ಮದುವೆಗಾಗಿ ಮಾತಾಡಲು ಯಾರಾದರೂ ಬಂದರೆ, ನಾವೇನು ಮಾಡೋಣ?</verse>
				<verse number="9">ಅವಳು ಗೋಡೆಯಾದರೆ, ನಾವು ಅವಳ ಮೇಲೆ ಬೆಳ್ಳಿಯ ಗೋಪುರವನ್ನು ಕಟ್ಟುವೆವು. ಅವಳು ಬಾಗಿಲಾದರೆ, ದೇವದಾರು ಹಲಿಗೆಗಳಿಂದ ಅವಳನ್ನು ಭದ್ರಪಡಿಸುವೆವು.</verse>
				<verse number="10">ನಾನು ಗೋಡೆಯಂಥವಳೇ, ನನ್ನ ಯೌವನವು ಬುರುಜುಗಳು. ಹೀಗೆ ನಾನು ಅವನ ದೃಷ್ಟಿಯಲ್ಲಿ ಸಮಾಧಾನ ಹೊಂದುವೆನು.</verse>
				<verse number="11">ಸೊಲೊಮೋನನಿಗೆ ಬಾಳ್ ಹಾಮೋನಿನಲ್ಲಿ ಒಂದು ದ್ರಾಕ್ಷಿತೋಟ ಇತ್ತು. ಅವನು ಆ ದ್ರಾಕ್ಷಿತೋಟವನ್ನು ರೈತರಿಗೆ ಗುತ್ತಿಗೆಗೆ ಕೊಟ್ಟನು. ಪ್ರತಿಯೊಬ್ಬ ಗುತ್ತಿಗೆಗಾರನು ಅದರ ಫಲದಿಂದ ಸಾವಿರ ಬೆಳ್ಳಿಯ ನಾಣ್ಯಗಳನ್ನು ತರಬೇಕಾಗಿತ್ತು.</verse>
				<verse number="12">ಸೊಲೊಮೋನನೇ, ಆ ಸಾವಿರ ಬೆಳ್ಳಿ ನಾಣ್ಯಗಳು ನಿನಗೇ ಇರಲಿ. ತೋಟದ ಫಲವನ್ನು ಕಾಪಾಡುವವರಿಗೆ ಇನ್ನೂರು ಬೆಳ್ಳಿನಾಣ್ಯಗಳು ಸೇರಲಿ. ಆದರೆ ನನ್ನ ದ್ರಾಕ್ಷಿತೋಟ ನನಗೇ ಇರಲಿ.</verse>
				<verse number="13">ತೋಟಗಳಲ್ಲಿ ವಾಸವಾಗಿರುವಳೇ, ಸ್ನೇಹಿತರು ನನ್ನ ಸಂಗಡ ಇದ್ದಾರೆ. ನಾನು ನಿನ್ನ ಧ್ವನಿಯನ್ನು ಕೇಳ ಮಾಡು!</verse>
				<verse number="14">ನನ್ನ ಪ್ರಿಯನೇ, ಸುಗಂಧ ಸಸ್ಯ ಪರ್ವತಗಳ ಮೇಲಿರುವ ಜಿಂಕೆಯಂತೆಯೂ, ಪ್ರಾಯದ ಹುಲ್ಲೆಯಂತೆಯೂ ನೀನು ಬೇಗ ಬಾ.</verse>
			</chapter>
		</book>
		<book number="23">
			<chapter number="1">
				<verse number="1">ಯೆಹೂದ ದೇಶದ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದರ್ಶನವು.</verse>
				<verse number="2">ಆಕಾಶಗಳೇ, ಕೇಳಿರಿ. ಭೂಮಿಯೇ, ಕಿವಿಗೊಡು. ಏಕೆಂದರೆ ಯೆಹೋವ ದೇವರು ಮಾತನಾಡುತ್ತಿದ್ದಾರೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.</verse>
				<verse number="3">ಎತ್ತು ತನ್ನ ಯಜಮಾನನನ್ನು, ಕತ್ತೆಯು ತನ್ನ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುವು. ಆದರೆ ಇಸ್ರಾಯೇಲಿಗೆ ತಿಳಿದಿಲ್ಲ. ನನ್ನ ಜನರಿಗೂ ತಿಳಿಯುವುದಿಲ್ಲ.”</verse>
				<verse number="4">ಅಯ್ಯೋ ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ! ದುಷ್ಟ ಸಂತತಿಯೇ, ಭ್ರಷ್ಟರಾದ ಮಕ್ಕಳೇ! ಯೆಹೋವ ದೇವರನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧರನ್ನು ತಿರಸ್ಕರಿಸಿದ್ದಾರೆ ಅವರಿಂದ ದೂರವಾಗಿದ್ದಾರೆ.</verse>
				<verse number="5">ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಏಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ? ತಲೆಯೆಲ್ಲಾ ಗಾಯವಾಗಿದೆ, ಹೃದಯವೆಲ್ಲಾ ಬಾಧಿತವಾಗಿದೆ.</verse>
				<verse number="6">ಅಂಗಾಲಿನಿಂದ ನಡುನೆತ್ತಿಯವರೆಗೂ ಬಾಸುಂಡೆ, ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಿಲ್ಲ.</verse>
				<verse number="7">ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ. ನಿಮ್ಮ ಹೊಲಗಳನ್ನು ಪರರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಇತರ ಜನರಿಂದ ಕೆಡವಿಬಿದ್ದು ಹಾಳಾಗಿದೆ.</verse>
				<verse number="8">ಚೀಯೋನ್ ಪುತ್ರಿಯು ದ್ರಾಕ್ಷಿ ತೋಟದಲ್ಲಿರುವ ಮನೆಯ ಹಾಗೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಿರುವ ಪಟ್ಟಣದ ಹಾಗೆಯೂ ಇದೆ.</verse>
				<verse number="9">ಸೇನಾಧೀಶ್ವರ ಯೆಹೋವ ದೇವರು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.</verse>
				<verse number="10">ಸೊದೋಮಿನ ಅಧಿಪತಿಗಳೇ, ನೀವು ಯೆಹೋವ ದೇವರ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳೇ! ನಮ್ಮ ದೇವರ ನಿಯಮಕ್ಕೆ ಕಿವಿಗೊಡಿರಿ.</verse>
				<verse number="11">“ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು?” ಎಂದು ಯೆಹೋವ ದೇವರು ನುಡಿಯುತ್ತಾರೆ. “ಟಗರುಗಳ ದಹನಬಲಿಗಳು, ಪುಷ್ಟಪಶುಗಳ ಕೊಬ್ಬು ಇದೆಲ್ಲಾ ನನಗೆ ಬೇಸರ. ಹೋರಿ, ಕುರಿ, ಹೋತಗಳ ರಕ್ತಕ್ಕೆ, ನಾನು ಸಂತೋಷಪಡುವುದಿಲ್ಲ.</verse>
				<verse number="12">ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ಬರುತ್ತೀರಲ್ಲಾ, ನನ್ನ ಪ್ರಾಕಾರಗಳನ್ನು ತುಳಿಯಲು ಯಾರು ನಿಮ್ಮನ್ನು ಕೇಳಿಕೊಂಡರು.</verse>
				<verse number="13">ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತರಬೇಡಿರಿ! ನಿಮ್ಮ ಧೂಪವು ನನಗೆ ಅಸಹ್ಯ. ಅಮಾವಾಸ್ಯೆಗಳು, ಸಬ್ಬತ್ ದಿನಗಳು, ಸಭೆಗಳು ಕೂಡುವುದು ಇವು ಬೇಡ. ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ಸಹಿಸಲಾರೆನು.</verse>
				<verse number="14">ನಿಮ್ಮ ಅಮಾವಾಸ್ಯೆಗಳನ್ನೂ, ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ದ್ವೇಷಿಸುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ.</verse>
				<verse number="15">ನೀವು ಪ್ರಾರ್ಥಿಸಲು ನಿಮ್ಮ ಕೈಗಳನ್ನು ಚಾಚುವಾಗ, ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು. “ನಿಮ್ಮ ಕೈಗಳು ರಕ್ತದಿಂದ ತೊಯ್ದಿವೆ!</verse>
				<verse number="16">“ನಿಮ್ಮನ್ನು ತೊಳೆದುಕೊಂಡು ಶುದ್ಧಮಾಡಿಕೊಳ್ಳಿರಿ. ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟಕೃತ್ಯಗಳನ್ನು ತೆಗೆದುಹಾಕಿರಿ. ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ.</verse>
				<verse number="17">ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ. ನ್ಯಾಯವನ್ನು ಹುಡುಕಿರಿ. ಹಿಂಸೆಪಡುವವರನ್ನು ಉಪಚರಿಸಿರಿ. ಅನಾಥರಿಗೆ ನ್ಯಾಯತೀರಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.</verse>
				<verse number="18">“ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಹಿಮದಂತೆ ಬೆಳ್ಳಗಾಗುವುವು. ರಕ್ತದಂತೆ ಕಡುಕೆಂಪಾಗಿದ್ದರೂ ಉಣ್ಣೆಯಂತೆ ಆಗುವುವು.</verse>
				<verse number="19">ನೀವು ಒಪ್ಪಿ ವಿಧೇಯರಾದರೆ ದೇಶದ ಸತ್ಫಲವನ್ನು ಸವಿಯುವಿರಿ.</verse>
				<verse number="20">ಆದರೆ ನೀವು ತಿರಸ್ಕರಿಸಿ ತಿರುಗಿಬಿದ್ದರೆ, ಖಡ್ಗದ ಬಾಯಿಗೆ ತುತ್ತಾಗುವಿರಿ,” ಏಕೆಂದರೆ ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.</verse>
				<verse number="21">ನಂಬಿಗಸ್ತಿಕೆಯ ಪಟ್ಟಣವು ವ್ಯಭಿಚಾರದ ಪಟ್ಟಣವಾಗಿದೆಯಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆಯಾಗಿತ್ತು. ಆದರೆ ಈಗ ಕೊಲೆಗಾರರಿಂದ ತುಂಬಿದೆ.</verse>
				<verse number="22">ನಿನ್ನ ಬೆಳ್ಳಿಯು ಕಂದಾಯಿತು. ನಿನ್ನ ದ್ರಾಕ್ಷಾರಸವು ನೀರಿನಿಂದ ಬೆರಕೆಯಾಯಿತು.</verse>
				<verse number="23">ನಿನ್ನ ಪ್ರಭುಗಳು ಎದುರುಬೀಳುವವರೂ, ಕಳ್ಳರ ಜೊತೆಗಾರರೂ ಆಗಿದ್ದಾರೆ. ಪ್ರತಿಯೊಬ್ಬನೂ ಲಂಚ ಪ್ರಿಯನೂ, ಬಹುಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ. ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವುದಿಲ್ಲ.</verse>
				<verse number="24">ಆದ್ದರಿಂದ ಸರ್ವಶಕ್ತರಾದ ದೇವರೂ, ಇಸ್ರಾಯೇಲಿನ ಪರಾಕ್ರಮಿಯೂ ಆದ ಯೆಹೋವ ದೇವರು ಹೇಳುವುದೇನೆಂದರೆ, “ಆಹಾ! ನನ್ನ ವೈರಿಗಳ ಮೇಲೆ ನನ್ನ ಕೋಪವನ್ನು ಹೊರಹಾಕುತ್ತೇನೆ ಮತ್ತು ನನ್ನ ಶತ್ರುಗಳ ಮೇಲೆ ಸೇಡು ತೀರಿಸಿಕೊಳ್ಳುತ್ತೇನೆ.</verse>
				<verse number="25">ನನ್ನ ಕೈಯನ್ನು ನಿನ್ನ ಕಡೆಗೆ ತಿರುಗಿಸಿ, ನಿನ್ನ ಮಲಿನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಹಾಕುವೆನು.</verse>
				<verse number="26">ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ, ನಿನ್ನ ಆಲೋಚನಾಪರರನ್ನು ಪ್ರಾರಂಭದಲ್ಲಿದ್ದ ಹಾಗೆಯೂ ತಿರುಗಿ ಒದಗಿಸಿ ಕೊಡುವೆನು. ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ, ನಂಬಿಗಸ್ತಿಕೆಯ ಪಟ್ಟಣವೆಂದೂ ಎನಿಸಿಕೊಳ್ಳುವೆ.”</verse>
				<verse number="27">ಚೀಯೋನ್ ಪಟ್ಟಣವು ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ಚಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.</verse>
				<verse number="28">ಆದರೆ ದ್ರೋಹಿಗಳೂ, ಪಾಪಿಗಳೂ ಒಟ್ಟಾಗಿ ನಾಶವಾಗುವರು ಮತ್ತು ಯೆಹೋವ ದೇವರನ್ನು ತೊರೆದವರು ನಿರ್ಮೂಲವಾಗುವರು.</verse>
				<verse number="29">“ನೀವು ಇಷ್ಟಪಟ್ಟ ಪವಿತ್ರ ಏಲಾ ಮರಗಳ ನಿಮಿತ್ತ ನಾಚಿಕೊಳ್ಳುವಿರಿ. ಆರಿಸಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.</verse>
				<verse number="30">ನೀವು ಬಾಡಿದ ಎಲೆಯುಳ್ಳ ಏಲಾ ಮರದಂತೆಯೂ, ನೀರಿಲ್ಲದ ತೋಟದಂತೆಯೂ ಇರುವಿರಿ.</verse>
				<verse number="31">ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕೆಲಸ, ಅವೆರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವುವು.”</verse>
			</chapter>
			<chapter number="2">
				<verse number="1">ಆಮೋಚನ ಮಗ ಯೆಶಾಯನಿಗೆ ಯೆಹೂದದ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡು ಬಂದ ದೈವೋಕ್ತಿ:</verse>
				<verse number="2">ಆ ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಎಲ್ಲಾ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು.</verse>
				<verse number="3">ಅನೇಕ ಪ್ರಜೆಗಳು ಬಂದು ಹೀಗೆ ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ, ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ದೇವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು, ನಾವು ಅವರ ದಾರಿಗಳಲ್ಲಿ ನಡೆಯುವೆವು.” ಏಕೆಂದರೆ ಚೀಯೋನಿನಿಂದ ದೇವರ ನಿಯಮವೂ, ಯೆರೂಸಲೇಮಿನಿಂದ ಯೆಹೋವ ದೇವರ ವಾಕ್ಯವೂ ಹೊರಡುವುವು.</verse>
				<verse number="4">ಅವರು ಅನೇಕ ಜನಾಂಗಗಳ ಮಧ್ಯದಲ್ಲಿ ನ್ಯಾಯತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವರು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ, ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.</verse>
				<verse number="5">ಯಾಕೋಬಿನ ಮನೆತನದವರೇ ಬನ್ನಿರಿ, ಯೆಹೋವ ದೇವರ ಬೆಳಕಿನಲ್ಲಿ ನಡೆಯೋಣ.</verse>
				<verse number="6">ಯಾಕೋಬಿನ ಮನೆತನದವರು ಪೂರ್ವದೇಶಗಳ ಮಂತ್ರತಂತ್ರಗಳಲ್ಲಿ ಮಗ್ನರಾಗಿ, ಫಿಲಿಷ್ಟಿಯರಂತೆ ಕಣಿ ಹೇಳುವವರಾಗಿಯೂ, ಬೇರೆ ದೇಶಗಳವರ ಮಧ್ಯದಲ್ಲಿ ಮೆಚ್ಚಿಕೆಯುಳ್ಳವರಾಗಿಯೂ ಇರುವುದರಿಂದ ಈ ನಿನ್ನ ಜನರನ್ನು ತಳ್ಳಿಬಿಟ್ಟಿದ್ದೀರಿ.</verse>
				<verse number="7">ಅವರ ದೇಶವು ಬೆಳ್ಳಿ ಬಂಗಾರಗಳಿಂದ ತುಂಬಿದೆ. ಅವರ ಬೊಕ್ಕಸಗಳಿಗೆ ಮಿತಿಯಿಲ್ಲ. ಅವರ ದೇಶವು ಕುದುರೆಗಳಿಂದ ತುಂಬಿದೆ, ಅವರ ರಥಗಳಿಗೆ ಮಿತಿಯೇ ಇಲ್ಲ.</verse>
				<verse number="8">ಅವರ ದೇಶವು ವಿಗ್ರಹಗಳಿಂದ ತುಂಬಿದೆ. ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನು ಆರಾಧಿಸುವರು.</verse>
				<verse number="9">ಆದ್ದರಿಂದ ಮನುಷ್ಯರು ನಮ್ರರಾಗುತ್ತಾರೆ; ಎಲ್ಲರೂ ತಲೆಬಾಗುತ್ತಾರೆ; ಅವರನ್ನು ಕ್ಷಮಿಸಬೇಡಿ.</verse>
				<verse number="10">ಯೆಹೋವ ದೇವರ ಭಯಕ್ಕೂ, ಅವರ ಮಹಿಮೆಯ ಘನತೆಗೂ ಬಂಡೆಗಳಲ್ಲಿ ಸೇರಿಕೋ. ಧೂಳಿನಲ್ಲಿ ನೀನು ಅಡಗಿಕೋ.</verse>
				<verse number="11">ಮನುಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವುದು. ಮನುಷ್ಯರ ಗರ್ವವು ತಗ್ಗುವುದು. ಆಗ ಯೆಹೋವ ದೇವರೊಬ್ಬರೇ ಆ ದಿನದಲ್ಲಿ ಉನ್ನತವಾಗಿರುವರು.</verse>
				<verse number="12">ಸೇನಾಧೀಶ್ವರ ಯೆಹೋವ ದೇವರ ದಿನವು ಗರ್ವ ಹಾಗೂ ಅಹಂಭಾವದಿಂದ ತುಂಬಿರುವವರ ಮೇಲೆಯೂ, ತನ್ನನ್ನು ಹೆಚ್ಚಿಸಿಕೊಂಡಿರುವ ಪ್ರತಿಯೊಬ್ಬನ ಮೇಲೆಯೂ ಬರುವುದು, ದೇವರು ಅವರನ್ನು ತಗ್ಗಿಸುವರು.</verse>
				<verse number="13">ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳೂ ಹಾಗೂ ಬಾಷಾನಿನ ಎಲ್ಲಾ ಏಲಾ ಮರಗಳ ಮೇಲೆಯೂ</verse>
				<verse number="14">ಎಲ್ಲಾ ಉನ್ನತವಾಗಿರುವ ಪರ್ವತಗಳು, ಎತ್ತರವಾದ ಗುಡ್ಡಗಳು,</verse>
				<verse number="15">ಎಲ್ಲಾ ಎತ್ತರವಾದ ಗೋಪುರಗಳು, ಭದ್ರವಾದ ಎಲ್ಲಾ ಗೋಡೆಗಳ ಮೇಲೆಯೂ,</verse>
				<verse number="16">ಎಲ್ಲಾ ತಾರ್ಷೀಷಿನ ಹಡಗುಗಳು ನೋಡತಕ್ಕ ಮನೋಹರವಾದ ಪ್ರತಿಯೊಂದು ನೌಕೆಗಳ ಮೇಲೆಯೂ ಆ ದಿನವು ತಪ್ಪದೇ ಬರುವುದು.</verse>
				<verse number="17">ಜನರ ಅಟ್ಟಹಾಸವು ತಗ್ಗಿಹೋಗುವುದು. ಆ ದಿನದಲ್ಲಿ ಯೆಹೋವ ದೇವರೊಬ್ಬರೇ ಉನ್ನತವಾಗಿರುವರು.</verse>
				<verse number="18">ವಿಗ್ರಹಗಳು ಸಂಪೂರ್ಣವಾಗಿ ಹೋಗಿಬಿಡುವುವು.</verse>
				<verse number="19">ಯೆಹೋವ ದೇವರು ಭೂಮಿಯನ್ನು ನಡುಗಿಸಲು ಎದ್ದಾಗ, ಯೆಹೋವ ದೇವರಿಗೂ ಅವರ ಮಹಿಮೆಗೂ, ಅವರ ಘನಕ್ಕೂ ಹೆದರಿ, ಬಂಡೆಗಳ ಸಂದುಗಳಿಗೂ, ಭೂಮಿಯ ಗವಿಗಳಿಗೂ ಜನರು ಸೇರಿಕೊಳ್ಳುವರು.</verse>
				<verse number="20">ಆ ದಿನದಲ್ಲಿ ಮನುಷ್ಯರು ಪೂಜಿಸುವುದಕ್ಕೋಸ್ಕರ ಮಾಡಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಚಿನ್ನದ ವಿಗ್ರಹಗಳನ್ನೂ ಇಲಿ ಬಾವಲಿಗಳಿಗಾಗಿ ಬಿಸಾಡಿಬಿಡುವರು.</verse>
				<verse number="21">ಯೆಹೋವ ದೇವರು ಭೂಮಿಯನ್ನು ನಡುಗಿಸಲು ಎದ್ದಾಗ, ಯೆಹೋವ ದೇವರ ಭಯಕ್ಕೂ, ಅವರ ಮಹಿಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ, ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಜನರು ನುಗ್ಗುವರು.</verse>
				<verse number="22">ಉಸಿರು ಇರುವವರೆಗೆ ಬದುಕುವ ನರಮಾನವನ ಮೇಲಿನ ಭರವಸೆಯನ್ನು ಬಿಟ್ಟುಬಿಡಿರಿ. ಏಕೆಂದರೆ ಅವನ ಗಣನೆ ಎಷ್ಟರವರೆಗೆ?</verse>
			</chapter>
			<chapter number="3">
				<verse number="1">ಇಗೋ, ಕರ್ತನೂ ಸರ್ವಶಕ್ತನೂ ಆಗಿರುವ ಯೆಹೋವ ದೇವರೆಂಬ ನಾನು ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ಯೆರೂಸಲೇಮಿನಿಂದಲೂ ಯೆಹೂದದಿಂದಲೂ ತೆಗೆದುಬಿಡುವೆನು.</verse>
				<verse number="2">ಇದಲ್ಲದೆ ಶೂರ, ಯುದ್ಧಭಟ, ನ್ಯಾಯಾಧಿಪತಿ, ಪ್ರವಾದಿ, ಶಕುನದವನು, ಹಿರಿಯನು,</verse>
				<verse number="3">ಸೇನಾಪತಿ, ಅಧಿಕಾರಿ, ಆಲೋಚನಾಪರನು, ತಾಂತ್ರಿಕನು ಮತ್ತು ವಾಕ್ಚಾತುರ್ಯವುಳ್ಳವನು ಆಗಿರುವ ಇವರನ್ನೆಲ್ಲಾ ತೆಗೆದುಬಿಡುವೆನು.</verse>
				<verse number="4">“ಬಾಲಕರನ್ನು ಅವರ ಪ್ರಭುಗಳನ್ನಾಗಿ ಮಾಡಿ, ಮಕ್ಕಳು ಅವರ ಮೇಲೆ ಆಳುವಂತೆ ಮಾಡುವೆನು.”</verse>
				<verse number="5">ಮನುಷ್ಯನಿಗೆ ವಿರೋಧವಾಗಿ ಮನುಷ್ಯನು, ನೆರೆಯವನಿಗೆ ವಿರೋಧವಾಗಿ ನೆರೆಯವನು ಹಿಂಸಿಸುವನು. ಹುಡುಗನು ವೃದ್ಧನ ವಿರೋಧವಾಗಿಯೂ, ನೀಚನು ಘನವಂತನ ವಿರೋಧವಾಗಿಯೂ ಸೊಕ್ಕಿನಿಂದ ವರ್ತಿಸುವರು.</verse>
				<verse number="6">ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿದು ಹೀಗೆ ಹೇಳುವನು, “ನಿನಗೆ ವಸ್ತ್ರವಿದೆ, ನಮ್ಮನ್ನು ನೀನು ಆಳುವವನಾಗು ಮತ್ತು ಈ ಹಾಳಾದ ಪಟ್ಟಣವು ನಿನ್ನ ಕೈಕೆಳಗಿರಲಿ.”</verse>
				<verse number="7">ಆ ದಿನದಲ್ಲಿ ಅವನು ಆಣೆಯಿಟ್ಟು, “ನಾನು ಉಪಶಮನ ಮಾಡುವವನಾಗುವುದಿಲ್ಲ. ಏಕೆಂದರೆ ನನ್ನ ಮನೆಯಲ್ಲಿ ಅನ್ನವಾಗಲಿ, ವಸ್ತ್ರವಾಗಲಿ ಇಲ್ಲ; ನನ್ನನ್ನು ಪ್ರಜಾಧಿಪತಿಯನ್ನಾಗಿ ಮಾಡಬೇಡಿರಿ,” ಎಂದು ಉತ್ತರಿಸುವನು.</verse>
				<verse number="8">ಏಕೆಂದರೆ ಯೆರೂಸಲೇಮು ಹಾಳಾಗಿದೆ, ಯೆಹೂದವು ಬಿದ್ದುಹೋಗಿದೆ. ಅವರ ನಡೆನುಡಿಗಳು ಯೆಹೋವ ದೇವರಿಗೆ ವಿರುದ್ಧವಾಗಿ ದೇವರ ಪ್ರಭಾವದ ದೃಷ್ಟಿಯನ್ನು ಕೆರಳಿಸುತ್ತಾರೆ.</verse>
				<verse number="9">ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಸೊದೋಮಿನಂತೆ ಮರೆಮಾಡದೆ ಪ್ರಕಟ ಮಾಡುತ್ತಾರೆ. ಅವರಿಗೆ ಕಷ್ಟ! ಏಕೆಂದರೆ ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.</verse>
				<verse number="10">ನೀತಿವಂತರಿಗೆ ನೀವು, “ಅವರಿಗೆ ಒಳ್ಳೆಯದಾಗಲಿ!” ಎಂದು ಹೇಳಿರಿ. ಏಕೆಂದರೆ ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.</verse>
				<verse number="11">ಕೆಡುಕರಿಗೆ ಕಷ್ಟ! ಅವರಿಗೆ ಕೇಡೇ ಇರಲಿ. ಏಕೆಂದರೆ ಅವರ ಕೈಗಳ ಪ್ರತಿಫಲವು ಅವರಿಗೆ ಕೊಡಲಾಗುವುದು.</verse>
				<verse number="12">ನನ್ನ ಪ್ರಜೆಗಳನ್ನು ಹುಡುಗರು ಬಾಧಿಸುವರು. ಸ್ತ್ರೀಯರು ಅವರನ್ನು ಆಳುವರು. ನನ್ನ ಪ್ರಜೆಗಳೇ, ನಿಮ್ಮನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ. ನೀವು ನಡೆಯುವ ದಾರಿಯನ್ನು ಹಾಳು ಮಾಡಿದ್ದಾರೆ.</verse>
				<verse number="13">ನ್ಯಾಯಾಧೀಶರನ್ನು ಯೆಹೋವ ದೇವರು ಸ್ವಾಧೀನಪಡಿಸಿಕೊಂಡಿದ್ದಾರೆ; ಅವರು ಜನರನ್ನು ನಿರ್ಣಯಿಸಲು ಎದ್ದರು.</verse>
				<verse number="14">ಯೆಹೋವ ದೇವರು ತಮ್ಮ ಪ್ರಜೆಗಳ ಹಿರಿಯರ ಸಂಗಡ, ಮತ್ತು ಅವರ ಅಧಿಪತಿಗಳ ಸಂಗಡ ನ್ಯಾಯತೀರಿಸಲು ಪ್ರವೇಶಿಸುವರು. ಏಕೆಂದರೆ, “ನೀವು ನನ್ನ ದ್ರಾಕ್ಷಿತೋಟವನ್ನು ತಿಂದುಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.</verse>
				<verse number="15">ನೀವು ನನ್ನ ಪ್ರಜೆಯನ್ನು ಹೊಡೆದು, ಚೂರುಗಳನ್ನಾಗಿ ಮಾಡಿ, ಬಡವರ ಮುಖಗಳನ್ನು ಹಿಂಡುವುದರ ಅರ್ಥವೇನು?” ಎಂದು ಸರ್ವಶಕ್ತ ದೇವರಾದ ಯೆಹೋವ ದೇವರು ವಾದಿಸುತ್ತಾರೆ.</verse>
				<verse number="16">ಇದಲ್ಲದೆ ಯೆಹೋವ ದೇವರು ಇಂತೆನ್ನುತ್ತಾರೆ: “ಚೀಯೋನ್ ಪುತ್ರಿಯರು ಅಹಂಕಾರಿಗಳಾಗಿದ್ದು, ಕತ್ತು ತೂಗುತ್ತಾ, ಕಣ್ಣುಗಳನ್ನು ತಿರುಗಿಸುತ್ತಾ, ನಾಜೂಕಿನಿಂದ ಹೆಜ್ಜೆ ಇಡುತ್ತಾ, ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುತ್ತಾರೆ;</verse>
				<verse number="17">ಆದ್ದರಿಂದ ಯೆಹೋವ ದೇವರು ಚೀಯೋನ್ ಪುತ್ರಿಯರ ನಡುನೆತ್ತಿಗೆ ಹುಣ್ಣನ್ನು ಅನುಮತಿಸಿ, ಅವರನ್ನು ಬೋಳುಮಾಡುವರು.”</verse>
				<verse number="18">ಆ ದಿನದಲ್ಲಿ ಯೆಹೋವ ದೇವರು ಅವರ ಕಾಲಂದಿಗೆ, ತುರುಬು ಬಲೆ, ಅರ್ಧಚಂದ್ರ,</verse>
				<verse number="19">ಜುಮಕಿ, ಬಳೆ, ಕುಲಾವಿ, ಶಿರವಸ್ತ್ರ,</verse>
				<verse number="20">ಕಂಠ ವಸ್ತ್ರ, ಕಾಲ ಸರಪಣಿ, ಡಾಬು, ಸುಗಂಧ ಭರಣಿ, ತಾಯಿತಿ,</verse>
				<verse number="21">ಮುದ್ರೆ ಉಂಗುರ, ಮೂಗುತಿ,</verse>
				<verse number="22">ಹಬ್ಬದ ಉಡಿಗೆ ತೊಡಿಗೆ, ಮೇಲಂಗಿ, ಶಾಲು, ಕೈಚೀಲ,</verse>
				<verse number="23">ಕೈಗನ್ನಡಿ, ನಾರುಮಡಿ, ಮುಡಿ ಮುಕುಟ, ಮೇಲ್ವಸ್ತ್ರ ಈ ಸೊಗಸು ಭೂಷಣಗಳನ್ನೆಲ್ಲಾ ತೆಗೆದುಹಾಕುವರು.</verse>
				<verse number="24">ಆಗ ಸುವಾಸನೆಯ ಬದಲಾಗಿ ದುರ್ವಾಸನೆ, ನಡುಪಟ್ಟಿಗೆ ಬದಲಾಗಿ ಹಗ್ಗ, ಜಡೆಯ ಬದಲಾಗಿ ಬೋಳುತಲೆ, ರೇಷ್ಮೆಬಟ್ಟೆಗೆ ಬದಲಾಗಿ ಗೋಣಿತಟ್ಟು, ಸೌಂದರ್ಯಕ್ಕೆ ಬದಲಾಗಿ ಬರೆ, ಇವೆಲ್ಲ ಅವರಿಗೆ ಬಂದೊದಗುವುದು.</verse>
				<verse number="25">ನಿನ್ನ ಗಂಡಸರು ಖಡ್ಗಕ್ಕೆ ತುತ್ತಾಗುವರು. ನಿನ್ನ ಶೂರರು ಯುದ್ಧದಲ್ಲಿ ಬೀಳುವರು.</verse>
				<verse number="26">ಚೀಯೋನ್ ಬಾಗಿಲುಗಳಲ್ಲಿ ಪ್ರಲಾಪವು, ದುಃಖವು ತುಂಬಿರುವುದು. ಅವಳು ನಿರ್ಗತಿಕಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.</verse>
			</chapter>
			<chapter number="4">
				<verse number="1">ಆ ದಿವಸದಲ್ಲಿ ಏಳುಮಂದಿ ಹೆಂಗಸರು ಒಬ್ಬ ಮನುಷ್ಯನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದು ಉಣ್ಣುವೆವು, ನಾವೇ ಸಂಪಾದಿಸಿ ವಸ್ತ್ರಗಳನ್ನು ಉಟ್ಟುಕೊಳ್ಳುವೆವು, ನಮ್ಮ ನಿಂದೆಯನ್ನು ನೀಗಿಸುವುದಕ್ಕೆ ನಿನ್ನ ಹೆಸರು ನಮಗಿದ್ದರೆ ಸಾಕು,” ಎಂದು ಕೇಳಿಕೊಳ್ಳುವರು.</verse>
				<verse number="2">ಆ ದಿನದಲ್ಲಿ ಯೆಹೋವ ದೇವರ ಕೊಂಬೆಯು ಸುಂದರವಾಗಿಯೂ, ಮಹಿಮೆಯುಳ್ಳದ್ದಾಗಿಯೂ ಇರುವುದು. ಭೂಮಿಯ ಫಲವು ಇಸ್ರಾಯೇಲರಲ್ಲಿ ಉಳಿದವರಿಗೆ ಅಭಿಮಾನವೂ, ರಮ್ಯವಾಗಿಯೂ ಇರುವುದು.</verse>
				<verse number="3">ಹೀಗಿರುವಲ್ಲಿ ಚೀಯೋನಿನಲ್ಲಿ ಉಳಿದವರು, ಯೆರೂಸಲೇಮಿನಲ್ಲಿ ಉಳಿದವರು ಹಾಗೂ ಯೆರೂಸಲೇಮಿನಲ್ಲಿ ವಾಸಿಸುವವರೆಂದೂ ದಾಖಲೆಗೊಂಡ ಪ್ರತಿಯೊಬ್ಬರೂ ಪವಿತ್ರರು ಎಂದು ಕರೆಯಲಾಗುವರು.</verse>
				<verse number="4">ಯೆಹೋವ ದೇವರು ನ್ಯಾಯತೀರ್ಪಿನ ಆತ್ಮದಿಂದಲೂ, ದಹಿಸುವ ಆತ್ಮದಿಂದಲೂ ಚೀಯೋನಿನ ಪುತ್ರಿಯರ ಕಲ್ಮಷವನ್ನು ತೊಳೆದು, ಯೆರೂಸಲೇಮಿನ ಮೇಲಿನ ರಕ್ತದ ಕಲೆಗಳನ್ನು ತೆಗೆದುಹಾಕುವರು.</verse>
				<verse number="5">ಆಗ ಯೆಹೋವ ದೇವರು ಚೀಯೋನ್ ಪರ್ವತದ ಪ್ರತಿಯೊಂದು ನಿವಾಸದ ಮೇಲೂ, ಅದರ ಸಭೆಗಳ ಮೇಲೂ, ಹಗಲಿನಲ್ಲಿ ಹೊಗೆಯನ್ನೂ, ಮೇಘವನ್ನೂ, ಇರುಳಿನಲ್ಲಿ ಪ್ರಜ್ವಲಿಸುವ ಅಗ್ನಿಪ್ರಕಾಶವನ್ನು ಉಂಟುಮಾಡುವರು. ಏಕೆಂದರೆ ದೇವರ ಮಹಿಮೆ ಎಲ್ಲದರ ಮೇಲೆ ಚಪ್ಪರದಂತೆಯೂ ಆವರಿಸುವುದು.</verse>
				<verse number="6">ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ, ಬಿರುಗಾಳಿಗೂ, ಮಳೆಗೂ ಆಶ್ರಯವನ್ನು ಕೊಡುವ ಮಂಟಪವಾಗಿ ಇರುವುದು.</verse>
			</chapter>
			<chapter number="5">
				<verse number="1">ನನ್ನ ಪ್ರಿಯನ ದ್ರಾಕ್ಷಿತೋಟದ ವಿಷಯವಾದ ಹಾಡನ್ನು ನನ್ನ ಪ್ರಾಣ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದ ಬಳಿಯಲ್ಲಿ ನನ್ನ ಅತಿ ಪ್ರಿಯನಿಗೆ ದ್ರಾಕ್ಷಿ ತೋಟವಿದೆ.</verse>
				<verse number="2">ಅವನು ಅದಕ್ಕೆ ಬೇಲಿಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿ ಸಸಿಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷಿ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆಯ ದ್ರಾಕ್ಷಿಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಬಿಟ್ಟಿತು.</verse>
				<verse number="3">“ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷಿ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.</verse>
				<verse number="4">ನನ್ನ ದ್ರಾಕ್ಷಿತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿ ಫಲವನ್ನು ಫಲಿಸುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿದ್ದು ಏಕೆ?</verse>
				<verse number="5">ನನ್ನ ದ್ರಾಕ್ಷಿ ತೋಟಕ್ಕೆ ನಾನು ಮಾಡುವುದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿಯನ್ನು ತೆಗೆದುಹಾಕುವೆನು. ಆಗ ದನಕರುಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವುದು.</verse>
				<verse number="6">ಅದನ್ನು ನಾನು ಹಾಳಾಗಲು ಬಿಡುವೆನು. ಅದರ ಕುಡಿ ಯಾರೂ ಕತ್ತರಿಸುವುದಿಲ್ಲ, ಅಗೆಯುವುದೂ ಇಲ್ಲ, ಅದರಲ್ಲಿ ಮುಳ್ಳು ಕಳೆ ಬೆಳೆಯುವುದು. ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾಪಿಸುವೆನು.”</verse>
				<verse number="7">ಸೇನಾಧೀಶ್ವರ ಯೆಹೋವ ದೇವರ ದ್ರಾಕ್ಷಿತೋಟವು ಇಸ್ರಾಯೇಲಿನ ಮನೆತನವು. ಯೆಹೂದದ ಜನವೋ ದೇವರ ಇಷ್ಟದ ಗಿಡವು. ಅವರು ನ್ಯಾಯವನ್ನು ನಿರೀಕ್ಷಿಸಲು, ಹಿಂಸೆಯೂ, ನೀತಿಯನ್ನು ನಿರೀಕ್ಷಿಸಲು ಗೋಳಾಟವು ಸಿಕ್ಕಿತು.</verse>
				<verse number="8">ಅಯ್ಯೋ, ಭೂಮಿಯ ಮಧ್ಯದಲ್ಲಿ ಒಂಟಿಯಾಗಿ ವಾಸಿಸುವಂತೆ ಮನೆಗೆ ಮನೆ ಕೂಡಿಸಿ, ಹೊಲಕ್ಕೆ ಹೊಲ ಸೇರಿಸುವ ನಿಮಗೆ ಕಷ್ಟ!</verse>
				<verse number="9">ಸೇನಾಧೀಶ್ವರ ಯೆಹೋವ ದೇವರು ನನ್ನ ಕಿವಿಗಳಲ್ಲಿ ಹೇಳುವುದೇನೆಂದರೆ: “ನಿಜವಾಗಿಯೂ ದೊಡ್ಡ ಮನೆಗಳು ಬರಿದಾಗುವುವು ಸುಂದರ ಭವನಗಳು ನಿವಾಸಿಗಳಿಲ್ಲದೆ ಹಾಳಾಗುವುವು.</verse>
				<verse number="10">ಹತ್ತು ಎಕರೆ ದ್ರಾಕ್ಷಿತೋಟ ಕೇವಲ ಇಪ್ಪತ್ತೆರಡು ಲೀಟರ್ ದ್ರಾಕ್ಷಾರಸವನ್ನು ಕೊಡುವುದು. ಸುಮಾರು ನೂರಾ ಅರವತ್ತು ಕಿಲೋಗ್ರಾಂ ಬೀಜಬಿತ್ತಿದರೆ, ಕೇವಲ ಹದಿನಾರು ಕಿಲೋಗ್ರಾಂ ಧಾನ್ಯ ಮಾತ್ರ ಸಿಗುವುದು.”</verse>
				<verse number="11">ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳಗಿನ ಜಾವದಲ್ಲಿ ಎದ್ದು ರಾತ್ರಿವರೆಗೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲಕಳೆಯುವವರಿಗೆ ಕಷ್ಟ!</verse>
				<verse number="12">ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ಮತ್ತು ಮದ್ಯಪಾನ ಇರುವುವು. ಆದರೆ ಯೆಹೋವ ದೇವರ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಅವರ ಕೈಗೆಲಸವನ್ನು ಲಕ್ಷಿಸುವುದಿಲ್ಲ.</verse>
				<verse number="13">ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋದರು; ಅವರ ಘನವಂತರು ಹಸಿವಿನಿಂದ ಸಾಯುವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವುದು.</verse>
				<verse number="14">ಹೀಗಿರುವುದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ವೈಭವ, ಸಮೂಹ, ಕೋಲಾಹಲ, ಉಲ್ಲಾಸಪಡುವುದು ಇವೆಲ್ಲವೂ ಅದರಲ್ಲಿ ಬೀಳುವುವು.</verse>
				<verse number="15">ನರಮಾನವರು ತಗ್ಗಿಹೋಗುವರು. ಅಹಂಭಾವದ ಕಣ್ಣುಗಳು ಕಂಗೆಡುವುವು.</verse>
				<verse number="16">ಆದರೆ ಸೇನಾಧೀಶ್ವರ ಯೆಹೋವ ದೇವರು ನ್ಯಾಯತೀರ್ಪಿನಲ್ಲಿ ಉನ್ನತವಾಗಿರುವರು. ಪರಿಶುದ್ಧ ದೇವರು ತಮ್ಮ ನ್ಯಾಯದಲ್ಲಿ ಪರಿಶುದ್ಧರೆಂದು ಕಾಣಿಸಿಕೊಳ್ಳುವರು.</verse>
				<verse number="17">ಪಟ್ಟಣ ಪ್ರದೇಶಗಳು ಹಾಳಾಗಿ ಮೇಕೆಮರಿಗಳಿಗೆ ಹುಲ್ಲುಗಾವಲುಗಳಾಗುವುವು. ಕುರಿಮರಿಗಳು ಅಲ್ಲಿ ಮೇಯುವುವು.</verse>
				<verse number="18">ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧವನ್ನೂ, ಬಂಡಿಹಗ್ಗದಿಂದಲೋ ಎಂಬಂತೆ ಪಾಪವನ್ನೂ ಎಳೆದು,</verse>
				<verse number="19">ನಾವು ಅವರ ಕೆಲಸವನ್ನು ನೋಡುವಂತೆ, “ದೇವರು ತ್ವರೆಯಾಗಿ ಅದನ್ನು ಬೇಗನೆ ಮಾಡಲಿ. ನಾವು ಇಸ್ರಾಯೇಲಿನ ಪರಿಶುದ್ಧರ ಆಲೋಚನೆಯನ್ನು ತಿಳಿದುಕೊಳ್ಳುವ ಹಾಗೆ ಅದು ಸಮೀಪಿಸಿ ಬರಲಿ ಎಂದು ಹೇಳುವವರಿಗೆ ಕಷ್ಟ!”</verse>
				<verse number="20">ಕೇಡಿಗೆ ಮೇಲೆಂದೂ, ಮೇಲಿಗೆ ಕೇಡೆಂದೂ ಕರೆದು, ಕತ್ತಲೆಯನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಯೆಂದೂ; ಕಹಿಯನ್ನು ಸಿಹಿ ಎಂದೂ, ಸಿಹಿಯನ್ನು ಕಹಿ ಎಂದೂ ಎಣಿಸುವವರಿಗೆ ಕಷ್ಟ!</verse>
				<verse number="21">ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳು ತಮ್ಮ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳು ಆಗಿರುವವರಿಗೆ ಕಷ್ಟ!</verse>
				<verse number="22">ಅಯ್ಯೋ, ದ್ರಾಕ್ಷಾರಸ ಕುಡಿಯುವುದರಲ್ಲಿ ಶೂರರೂ, ಮದ್ಯ ಸಾಹಸಿಗಳೂ,</verse>
				<verse number="23">ಲಂಚಕ್ಕೋಸ್ಕರ ದುಷ್ಟನನ್ನು ನೀತಿವಂತನೆಂದು ನಿರ್ಣಯಿಸಿ, ನೀತಿಯನ್ನು ನೀತಿವಂತನಿಂದ ತೆಗೆದು ಹಾಕುವವರಿಗೂ ಕಷ್ಟ!</verse>
				<verse number="24">ಏಕೆಂದರೆ ಅವರು ಸೇನಾಧೀಶ್ವರ ಯೆಹೋವ ದೇವರ ನಿಯಮವನ್ನು ನಿರಾಕರಿಸಿದ್ದರಿಂದಲೂ, ಇಸ್ರಾಯೇಲಿನ ಪರಿಶುದ್ಧರ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿ ಬಿಡುವ ಹಾಗೆಯೂ, ಜ್ವಾಲೆಯು ಒಣಹುಲ್ಲನ್ನು ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆಯುವಂತೆಯೂ, ಚಿಗುರು ಅದರ ಧೂಳಿನಂತೆಯೂ ಏರಿ ಹೋಗುವುವು.</verse>
				<verse number="25">ಆದಕಾರಣ ಯೆಹೋವ ದೇವರು ಕೋಪಗೊಂಡು ಜನರಿಗೆ ವಿರೋಧವಾಗಿ ಉರಿಗೊಂಡು ಅವರ ಮೇಲೆ ತಮ್ಮ ಕೈಚಾಚಿ, ಅವರನ್ನು ಹೊಡೆದಿದ್ದಾರೆ, ಬೆಟ್ಟಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿರುವುವು. ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇರುವುದು.</verse>
				<verse number="26">ಅವರು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಕಟ್ಟಕಡೆಯಿಂದ ಅವರಿಗೆ ಸೀಟಿ ಹಾಕುವರು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು,</verse>
				<verse number="27">ಅವರಲ್ಲಿ ಯಾರೂ ದಣಿದು ಮುಗ್ಗರಿಸರು, ಅವರು ತೂಕಡಿಸುವುದಿಲ್ಲ, ನಿದ್ರಿಸುವುದಿಲ್ಲ, ಅವರ ನಡುಕಟ್ಟು ಬಿಚ್ಚಿಕೊಳ್ಳುವುದಿಲ್ಲ. ಕೆರದ ಬಾರು ಹರಿಯುವುದಿಲ್ಲ.</verse>
				<verse number="28">ಅವರ ಬಾಣಗಳು ಹದವಾಗಿವೆ. ಅವರ ಬಿಲ್ಲುಗಳು ಬಿಗಿದಿವೆ, ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ, ಅವರ ರಥಗಳ ಚಕ್ರಗಳು ಬಿರುಗಾಳಿಯಂತೆಯೂ ರಭಸವಾಗಿವೆ.</verse>
				<verse number="29">ಅವರ ಗರ್ಜನೆಯು ಸಿಂಹ ಆರ್ಭಟಿಸಿದಂತಿದೆ. ಪ್ರಾಯದ ಸಿಂಹ ಆರ್ಭಟಿಸಿದಂತಿದೆ. ಹೌದು, ಗರ್ಜಿಸುತ್ತಾ ಬೇಟೆಹಿಡಿದು ಭದ್ರವಾಗಿ ಹೊತ್ತುಕೊಂಡು ಹೋಗುತ್ತಾರೆ, ಅದನ್ನು ಬಿಡಿಸುವವನು ಒಬ್ಬನೂ ಇಲ್ಲ.</verse>
				<verse number="30">ಆ ದಿನದಲ್ಲಿ ಅವರು ಸಮುದ್ರವು ಭೋರ್ಗರೆಯುವಂತೆ ಅದರ ಮೇಲೆ ಗರ್ಜಿಸುವರು. ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವನ್ನೂ, ದುಃಖವನ್ನೂ ನೋಡುವೆ. ಸೂರ್ಯ ಕೂಡ ಮೋಡಗಳಿಂದ ಕಪ್ಪಾಗುವುದು.</verse>
			</chapter>
			<chapter number="6">
				<verse number="1">ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಯೆಹೋವ ದೇವರು ಉನ್ನತೋನ್ನತವಾಗಿ ಸಿಂಹಾಸನದ ಮೇಲೆ ಕೂತಿರುವುದನ್ನು ಕಂಡೆನು. ಅವರ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.</verse>
				<verse number="2">ಅವರ ಮೇಲೆ ಸೆರಾಫಿಯರು ನಿಂತಿದ್ದರು. ಪ್ರತಿಯೊಬ್ಬನಿಗೂ ಆರು ರೆಕ್ಕೆಗಳಿದ್ದವು. ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದರು.</verse>
				<verse number="3">ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರ ಯೆಹೋವ ದೇವರು ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು. ಭೂಮಂಡಲವೆಲ್ಲಾ ಅವರ ಮಹಿಮೆಯಿಂದ ತುಂಬಿದೆ,” ಎಂದು ಕೂಗಿ ಹೇಳಿದನು.</verse>
				<verse number="4">ಕೂಗುವವನ ಸ್ವರಕ್ಕೆ ದ್ವಾರದ ನಿಲುವುಗಳು ಕದಲಿದವು; ಧೂಮವು ಆಲಯವನ್ನೆಲ್ಲ ತುಂಬಿತು.</verse>
				<verse number="5">ಆಗ ನಾನು, “ಅಯ್ಯೋ, ನಾನು ನಾಶವಾದೆನಲ್ಲಾ! ಏಕೆಂದರೆ, ನಾನು ಅಶುದ್ಧ ತುಟಿಯವನು. ನಾನು ಅಶುದ್ಧ ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು. ನನ್ನ ಕಣ್ಣುಗಳು ರಾಜಾಧಿರಾಜರೂ ಸೇನಾಧೀಶ್ವರ ಯೆಹೋವ ದೇವರನ್ನು ಕಂಡವು!” ಎಂದೆನು.</verse>
				<verse number="6">ಆಗ ಸೆರಾಫಿಯರಲ್ಲಿ ಒಬ್ಬನು ಬಲಿಪೀಠದಿಂದ ತಾನು ಉರಿಯುವ ಕೆಂಡವನ್ನು ತನ್ನ ಕೈಯಲ್ಲಿ ಹಿಡಿದುಕೊಂಡು ಹಾರಿ ಬಂದು,</verse>
				<verse number="7">ಅದರಿಂದ ನನ್ನ ಬಾಯಿಗೆ ಮುಟ್ಟಿಸಿ, “ಇಗೋ, ಇದು ನಿನ್ನ ತುಟಿಗಳನ್ನು ತಗಲಿದೆ. ನಿನ್ನ ದೋಷವು ತೊಲಗಿದೆ, ನಿನ್ನ ಪಾಪಪರಿಹಾರ ಆಯಿತು,” ಎಂದು ಹೇಳಿದನು.</verse>
				<verse number="8">ಆಗ, “ಯಾರನ್ನು ಕಳುಹಿಸಲಿ, ಯಾರು ನಮಗೋಸ್ಕರ ಹೋಗುವರು?” ಎಂಬ ಯೆಹೋವ ದೇವರ ನುಡಿಯನ್ನು ನಾನು ಕೇಳಿ, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿರಿ,” ಎಂದೆನು.</verse>
				<verse number="9">ಅದಕ್ಕೆ ಅವರು, “ನೀನು ಈ ಜನರ ಬಳಿಗೆ ಹೋಗಿ: “ ‘ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ,’</verse>
				<verse number="10">ತಮ್ಮ ಕಣ್ಣುಗಳಿಂದ ನೋಡದಂತೆಯೂ, ತಮ್ಮ ಕಿವಿಗಳಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗದಂತೆಯೂ ಈ ಜನರ ಹೃದಯವನ್ನು ಕಠಿಣಗೊಳಿಸಿ, ಅವರ ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣುಗಳನ್ನು ಮೊಬ್ಬಾಗಿಸು,” ಎಂದು ನನಗೆ ಹೇಳಿದರು.</verse>
				<verse number="11">ಆಗ ನಾನು, “ಯೆಹೋವ ದೇವರೇ, ಇದು ಎಷ್ಟರವರೆಗೆ?” ಎಂದೆನು. ಅದಕ್ಕೆ ಅವರು ಹೀಗೆ ಉತ್ತರಕೊಟ್ಟರು, “ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯನಿಲ್ಲದೆ, ಹೊಲಗಳು ಸಂಪೂರ್ಣವಾಗಿ ಹಾಳಾಗುವವರೆಗೂ,</verse>
				<verse number="12">ಯೆಹೋವ ದೇವರಾದ ನಾನು ಮನುಷ್ಯರನ್ನು ದೂರ ಮಾಡುವವರೆಗೂ, ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವವರೆಗೂ ಅದು ಹೀಗಿರುವುದು.</verse>
				<verse number="13">ಆದರೆ ದೇಶದಲ್ಲಿ ಹತ್ತನೆಯ ಪಾಲು ಉಳಿದಿದ್ದರೂ, ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ. ಅದೇ ರೀತಿಯಾಗಿ ಪವಿತ್ರ ಜನರು ದೇಶದಲ್ಲಿ ಬುಡವಾಗಿ ಉಳಿದಿರುವರು.”</verse>
			</chapter>
			<chapter number="7">
				<verse number="1">ಯೋತಾಮನ ಮಗನೂ, ಉಜ್ಜೀಯನ ಮೊಮ್ಮಗನೂ, ಯೆಹೂದದ ಅರಸನೂ ಆದ ಆಹಾಜನ ಕಾಲದಲ್ಲಿ, ಅರಾಮ್ಯರ ಅರಸನಾದ ರೆಚೀನ, ರೆಮಲ್ಯನ ಮಗನೂ, ಇಸ್ರಾಯೇಲರ ಅರಸನೂ ಆದ ಪೆಕಹ ಎಂಬುವರು ಯೆರೂಸಲೇಮಿನ ವಿರುದ್ಧವಾಗಿ ಯುದ್ಧಕ್ಕೆ ಹೋದರು. ಆದರೆ ಅದನ್ನು ಜಯಿಸಲು ಸಾಧ್ಯವಾಗಲಿಲ್ಲ.</verse>
				<verse number="2">ಸಿರಿಯಾದವರು ಎಫ್ರಾಯೀಮ್ಯರೊಂದಿಗೆ ಜತೆಗೂಡಿದ್ದಾರೆಂದು ದಾವೀದನ ವಂಶದವರಿಗೆ ತಿಳಿದಾಗ, ಆಹಾಜನ ಮತ್ತು ಅವರ ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.</verse>
				<verse number="3">ಆಗ ಯೆಹೋವ ದೇವರು ಯೆಶಾಯನಿಗೆ, “ನೀನು ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಹೋಗಿ, ಅಗಸರ ಹೊಲದ ಮೇಲೆ ಹೋಗುವ ದಾರಿಯಲ್ಲಿ ಮೇಲಿನ ಕೆರೆಯ ಕಾಲುವೆಯ ಕೊನೆಯ ಹತ್ತಿರ ಆಹಾಜನನ್ನು ಎದುರುಗೊಳ್ಳು.</verse>
				<verse number="4">ಅವನಿಗೆ, ಈ ಪ್ರಕಾರ ಹೇಳಬೇಕು: ‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರು, ಮತ್ತು ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.</verse>
				<verse number="5">ಏಕೆಂದರೆ, ಸಿರಿಯಾದವರೂ ಎಫ್ರಾಯೀಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ಒಳಸಂಚುಮಾಡಿ,</verse>
				<verse number="6">“ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ, ಅದನ್ನು ವ್ಯಥೆಪಡಿಸಿ, ಅದರಲ್ಲಿ ನಮಗಾಗಿ ಮಾಡಿಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ, ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೆಯೇಲನ ಮಗನನ್ನು ನೇಮಿಸಿಕೊಳ್ಳೋಣ,” ಎಂದುಕೊಂಡಿದ್ದಾರೆ.</verse>
				<verse number="7">ಅದಕ್ಕೆ ಸಾರ್ವಭೌಮ ಯೆಹೋವ ದೇವರು, “ ‘ಅದು ನಿಲ್ಲುವುದಿಲ್ಲ, ಅದು ಆಗುವುದೇ ಇಲ್ಲ.</verse>
				<verse number="8">ಏಕೆಂದರೆ, ದಮಸ್ಕವು ಸಿರಿಯಾದ ರಾಜಧಾನಿ ಮತ್ತು ದಮಸ್ಕದ ತಲೆಯು ರೆಚೀನ ಮಾತ್ರ, ಅರವತ್ತೈದು ವರುಷಗಳೊಳಗೆ ಎಫ್ರಾಯೀಮರು ರಾಷ್ಟ್ರವಾಗದೆ ಭಂಗಪಡುವರು.</verse>
				<verse number="9">ಎಫ್ರಾಯೀಮಿನ ರಾಜಧಾನಿ ಸಮಾರ್ಯ. ಸಮಾರ್ಯದ ರಾಜಧಾನಿ ರೆಮಲ್ಯನ ಮಗನು. ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವುದಿಲ್ಲ,’ ಎಂದು ಹೇಳುತ್ತಾರೆ.”</verse>
				<verse number="10">ಯೆಹೋವ ದೇವರು ಆಹಾಜನಿಗೆ ಹೇಳಿದ್ದೇನೆಂದರೆ:</verse>
				<verse number="11">“ನಿನ್ನ ದೇವರಾದ ಯೆಹೋವ ದೇವರಿಂದ ಒಂದು ಗುರುತನ್ನು ಕೇಳು. ಅದು ಕೆಳಗೆ ಆಳದಲ್ಲಿದ್ದರೂ, ಮೇಲೆ ಎತ್ತರಲ್ಲಿದ್ದರೂ ಅದನ್ನು ಕೇಳಿಕೋ,” ಎಂದು ಹೇಳಿದರು.</verse>
				<verse number="12">ಆದರೆ ಆಹಾಜನು, “ನಾನು ಕೇಳಿಕೊಳ್ಳುವುದಿಲ್ಲ; ಯೆಹೋವ ದೇವರನ್ನು ಪರೀಕ್ಷಿಸುವುದೂ ಇಲ್ಲ” ಎಂದನು.</verse>
				<verse number="13">ಅದಕ್ಕೆ ಯೆಶಾಯನು, “ದಾವೀದನ ವಂಶದವರೇ! ಈಗ ಕೇಳಿರಿ, ಮನುಷ್ಯರ ತಾಳ್ಮೆಯನ್ನು ಪರೀಕ್ಷಿಸುವುದು ಸಾಕಾಗುವುದಿಲ್ಲವೇ? ನೀವು ನನ್ನ ದೇವರ ತಾಳ್ಮೆಯನ್ನು ಪರೀಕ್ಷಿಸುವಿರಾ?</verse>
				<verse number="14">ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.</verse>
				<verse number="15">ಆ ಮಗು ಬೆಳೆದು, ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವಳಿಕೆಯು ಬರುವ ತನಕ ಮೊಸರನ್ನು ಮತ್ತು ಜೇನನ್ನು ತಿನ್ನುವುದು.</verse>
				<verse number="16">ಹೌದು, ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವುದಕ್ಕಿಂತ ಮುಂಚೆಯೇ, ನೀನು ಭಯಪಡುವ ಆ ಅರಸರುಗಳ ದೇಶ ನಿರ್ಜನವಾಗುವುದು.</verse>
				<verse number="17">ಯೆಹೋವ ದೇವರು ನಿನ್ನ ಮೇಲೆಯೂ, ನಿನ್ನ ಜನರ ಮೇಲೆಯೂ, ನಿನ್ನ ತಂದೆಯ ಮನೆಯ ಮೇಲೆಯೂ ಯೆಹೂದದಿಂದ ಎಫ್ರಾಯೀಮು ಅಗಲಿದ ದಿನದಿಂದ ಅಂದರೆ ಅಸ್ಸೀರಿಯದ ಅರಸನ ಕಾಲದಿಂದಲೂ ಬಾರದೆ ಇದ್ದ ದಿವಸಗಳನ್ನು ಬರಮಾಡುವರು.”</verse>
				<verse number="18">ಆ ದಿನದಲ್ಲಿ ಈಜಿಪ್ಟಿನ ನದಿಗಳ ಕಟ್ಟಕಡೆಯಿಂದ ನೊಣಕ್ಕೂ, ಅಸ್ಸೀರಿಯ ದೇಶದ ಜೇನುಹುಳಕ್ಕೂ ಯೆಹೋವ ದೇವರು ಸಿಳ್ಳುಹಾಕುವರು.</verse>
				<verse number="19">ಅವು ಬಂದು ಹಾಳಾದ ಕಣಿವೆಗಳಲ್ಲಿಯೂ ಬಂಡೆಗಳ ಬಿರುಕುಗಳಲ್ಲಿಯೂ ಎಲ್ಲಾ ಮುಳ್ಳಿನ ಮೇಲೆಯೂ ಎಲ್ಲಾ ಪೊದೆಗಳಲ್ಲಿಯೂ ಮುತ್ತಿಕೊಳ್ಳುವುವು.</verse>
				<verse number="20">ಅದೇ ದಿನದಲ್ಲಿ ಯೆಹೋವ ದೇವರು ಯೂಫ್ರೇಟೀಸ್ ನದಿಯ ಆಚೆಗಿರುವ ಅಸ್ಸೀರಿಯದ ರಾಜನೆಂಬುವನಿಂದ ಬಾಡಿಗೆ ಕ್ಷೌರದ ಕತ್ತಿಯಿಂದ ಯೆಹೂದದ ತಲೆ ಮತ್ತು ಕಾಲಿನ ಕೂದಲನ್ನು ಬೋಳಿಸುವರು ಹಾಗೂ ಗಡ್ಡವನ್ನು ತೆಗೆದುಬಿಡುವರು.</verse>
				<verse number="21">ಆ ದಿನದಲ್ಲಿ ಮನುಷ್ಯನು ಒಂದು ಹಸುವಿನ ಕಡಸನ್ನು ಮತ್ತು ಎರಡು ಕುರಿಗಳನ್ನು ಸಾಕುವನು.</verse>
				<verse number="22">ಅವು ಸಮೃದ್ಧಿಯಾಗಿ ಹಾಲನ್ನು ಕೊಡುವುದರಿಂದ ಅವನು ಮೊಸರನ್ನು ತಿನ್ನುವನು. ಏಕೆಂದರೆ ಆ ದೇಶದಲ್ಲಿ ಉಳಿದಿರುವವರೆಲ್ಲರೂ ಮೊಸರನ್ನು ಮತ್ತು ಜೇನುತುಪ್ಪವನ್ನು ತಿನ್ನುವರು.</verse>
				<verse number="23">ಆ ದಿನದಲ್ಲಿ ಸಾವಿರ ಬೆಳ್ಳಿ ನಾಣ್ಯಗಳ ಬೆಲೆಯ ಸಮಸ್ತ ದ್ರಾಕ್ಷಿಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿಗಳಿಂದ ಆಗುವುದು.</verse>
				<verse number="24">ದೇಶವೆಲ್ಲಾ ಮುಳ್ಳು ದತ್ತೂರಿಗಳಿಂದ ತುಂಬಿರುವುದರಿಂದ ಮನುಷ್ಯರು ಬಿಲ್ಲು ಮತ್ತು ಬಾಣಗಳೊಂದಿಗೆ ಅಲ್ಲಿಗೆ ಬರುವರು.</verse>
				<verse number="25">ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ. ಆದರೆ ಅದು ಎತ್ತುಗಳನ್ನು ಬಿಡುವುದಕ್ಕೂ, ಕುರಿಗಳು ತುಳಿದಾಡುವುದಕ್ಕೂ ಗುರಿಯಾಗುವುದು.</verse>
			</chapter>
			<chapter number="8">
				<verse number="1">ಯೆಹೋವ ದೇವರು, “ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಸಾಮಾನ್ಯ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್, ಎಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ ಎಂದು ಬರೆ,” ಎಂಬುದಾಗಿ ನನಗೆ ಹೇಳಿದರು.</verse>
				<verse number="2">ನಾನು ಯಾಜಕನಾದ ಊರೀಯನನ್ನೂ ಯೆಬೆರೆಕ್ಯನ ಮಗನಾದ ಜೆಕರ್ಯನನ್ನೂ ನಂಬಿಗಸ್ತ ಸಾಕ್ಷಿಗಳನ್ನಾಗಿ ಇರಿಸಿಕೊಂಡೆನು.</verse>
				<verse number="3">ಅನಂತರ ನಾನು ಪ್ರವಾದಿನಿಯಾದ ನನ್ನ ಹೆಂಡತಿಯನ್ನು ಕೂಡಲು, ಆಕೆಯು ಗರ್ಭಧರಿಸಿ ಒಬ್ಬ ಗಂಡುಮಗುನ್ನು ಹೆತ್ತಳು. ಆಗ ಯೆಹೋವ ದೇವರು ನನಗೆ, “ಆ ಮಗುವಿಗೆ, ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು, ಎಂದು ಹೇಳಿದರು.</verse>
				<verse number="4">ಏಕೆಂದರೆ ಆ ಮಗುವು, ‘ಅಪ್ಪಾ’ ಅಥವಾ ‘ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮುಂಚೆ ಅಸ್ಸೀರಿಯದ ಅರಸನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದರು.</verse>
				<verse number="5">ಯೆಹೋವ ದೇವರು ಮತ್ತೊಮ್ಮೆ ನನಗೆ,</verse>
				<verse number="6">“ಈ ಜನರು ಮೆಲ್ಲಗೆ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಚೀನನನ್ನೂ ರೆಮಲ್ಯನ ಮಗನನ್ನೂ ನೆಚ್ಚಿಕೊಂಡು ಮೆರೆದಿದ್ದರಿಂದ,</verse>
				<verse number="7">ಯೆಹೋವ ದೇವರಾದ ನಾನು ಎಲ್ಲಾ ಪ್ರತಾಪದಿಂದ ಕೂಡಿದ ಅಸ್ಸೀರಿಯದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವೆನು. ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ,</verse>
				<verse number="8">ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. ಇಮ್ಮಾನುಯೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲವನ್ನೆಲ್ಲಾ ಆವರಿಸಿಕೊಳ್ಳುವುವು.”</verse>
				<verse number="9">ಜನಾಂಗಗಳೇ, ನೀವು ಯುದ್ಧವನ್ನು ಘೋಷಿಸಿರಿ, ಆದರೂ ಚದರಿಹೋಗುವಿರಿ! ಎಲ್ಲಾ ದೂರ ದೇಶದವರೇ ಕಿವಿಗೊಡಿರಿ. ನಡುಕಟ್ಟಿಕೊಳ್ಳಿರಿ, ಆದರೂ ಚದರಿಹೋಗುವಿರಿ! ನಡುಕಟ್ಟಿಕೊಳ್ಳಿರಿ, ಆದರೂ ಚದರಿಹೋಗುವಿರಿ!</verse>
				<verse number="10">ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವುದು, ನಿಮ್ಮ ಯೋಜನೆಯನ್ನು ಪ್ರಸ್ತಾಪಿಸಿರಿ, ಆದರೆ ಅದು ನಿಲ್ಲುವುದಿಲ್ಲ, ಏಕೆಂದರೆ ದೇವರು ನಮ್ಮ ಸಂಗಡ ಇದ್ದಾರೆ.</verse>
				<verse number="11">ನಾನು ಈ ಜನರ ಮಾರ್ಗದಲ್ಲಿ ನಡೆಯಬಾರದೆಂದು ಯೆಹೋವ ದೇವರು ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು ನನಗೆ,</verse>
				<verse number="12">“ಇವರು ಯಾವುದನ್ನು ಒಳಸಂಚು ಎಂದು ಹೇಳುತ್ತಾರೋ, ನೀವು ಅದನ್ನು ಒಳಸಂಚು ಎಂದು ಹೇಳಬೇಡಿರಿ. ಅವರ ಭಯಕ್ಕೆ ನೀವು ಭಯಪಡಬೇಡಿರಿ, ಇಲ್ಲವೆ ಹೆದರಬೇಡಿರಿ.</verse>
				<verse number="13">ಸೇನಾಧೀಶ್ವರ ಯೆಹೋವ ದೇವರನ್ನೇ ಪ್ರತಿಷ್ಠೆ ಪಡಿಸಿಕೊಳ್ಳಿರಿ; ನೀವು ಭಯಪಡಬೇಕಾದುದು ಅವರಿಗೇ, ನೀವು ಹೆದರಬೇಕಾಗಿರುವುದು ಅವರಿಗೇ.</verse>
				<verse number="14">ಅವರೇ ನಿಮಗೆ ಪರಿಶುದ್ಧ ಸ್ಥಳವಾಗಿರುವರು. ಆದರೆ ಇಸ್ರಾಯೇಲ್ ಮತ್ತು ಯಹೂದ ಎರಡು ಮನೆಗಳಿಗೆ ಎಡವುವ ಕಲ್ಲೂ, ಮುಗ್ಗರಿಸುವ ಬಂಡೆಯೂ, ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಬೋನೂ ಆಗಿರುವರು.</verse>
				<verse number="15">ಅವರಲ್ಲಿ ಅನೇಕರು ಎಡವಿಬೀಳುವರು, ಮುಗ್ಗರಿಸಿ ಮೂಳೆ ಮುರಿದುಕೊಳ್ಳುವರು, ಬಲೆಗೆ ಸಿಕ್ಕಿ ಬೀಳುವರು.”</verse>
				<verse number="16">ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ದೇವರ ಶಿಕ್ಷಣವನ್ನು ಮುದ್ರಿಸು.</verse>
				<verse number="17">ಯಾಕೋಬಿನ ವಂಶದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವ ದೇವರಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು. ನಾನು ದೇವರ ಮೇಲೆ ಭರವಸೆ ಇಡುವೆನು.</verse>
				<verse number="18">ಇಗೋ, ನಾನೂ ಯೆಹೋವ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರ ಯೆಹೋವ ದೇವರಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲಿನಲ್ಲಿದ್ದೇವೆ.</verse>
				<verse number="19">ಲೊಚಗುಟ್ಟುವ, ಪಿಸುಮಾತಾಡುವ ಮಂತ್ರಗಾರರನ್ನೂ; ಕಣಿಹೇಳುವವರನ್ನೂ ಹುಡುಕಿರಿ ಎಂದು ಅವರು ನಿಮಗೆ ಹೇಳುವಾಗ, ಜನರು ತಮ್ಮ ದೇವರನ್ನೇ ಹುಡುಕುವುದಿಲ್ಲವೋ? ಜೀವಿತರಿಗಾಗಿ ಸತ್ತವರಲ್ಲಿ ಹೋಗುವುದುಂಟೋ?</verse>
				<verse number="20">ದೇವರ ಶಿಕ್ಷಣ ಮತ್ತು ಎಚ್ಚರಿಸುವ ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಒಂದು ವೇಳೆ ಅವರು ಹೇಳದಿದ್ದರೆ, ಅವರಲ್ಲಿ ಮುಂಜಾವಿನ ಬೆಳಕು ಮೂಡಿಬರುವುದಿಲ್ಲ.</verse>
				<verse number="21">ಅವರು ಘೋರಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯುವರು. ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜನನ್ನೂ, ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.</verse>
				<verse number="22">ಅವರು ಭೂಮಿಯನ್ನು ದೃಷ್ಟಿಸಿದರೂ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು, ಕಾರ್ಗತ್ತಲೆಗೆ ಅವರನ್ನು ದೂಡಲಾಗುವುದು.</verse>
			</chapter>
			<chapter number="9">
				<verse number="1">ಆದರೂ ಸಂಕಟಪಟ್ಟ ದೇಶಕ್ಕೆ ಅಂಧಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬುಲೂನ್ ನಾಡು ಮತ್ತು ನಫ್ತಾಲಿ ನಾಡುಗಳನ್ನು ಅವರು ಅವಮಾನಕ್ಕೆ ಗುರಿಮಾಡಿ, ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಇತರ ಜನರಿರುವ ಗಲಿಲಾಯ ನಾಡು, ಈ ಪ್ರಾಂತವನ್ನೆಲ್ಲಾ ಘನಪಡಿಸಿದ್ದಾರೆ.</verse>
				<verse number="2">ಕತ್ತಲೆಯಲ್ಲಿ ನಡೆಯುವ ಈ ಜನರಿಗೆ ಮಹಾ ಬೆಳಕು ಕಾಣಿಸಿತು, ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಉದಯಿಸಿತು.</verse>
				<verse number="3">ನೀವು ಜನಾಂಗವನ್ನು ವೃದ್ಧಿಗೊಳಿಸಿದ್ದೀರಿ ಮತ್ತು ಸಂತೋಷವನ್ನು ಹೆಚ್ಚಿಸಿದ್ದೀರಿ. ಸುಗ್ಗಿ ಕಾಲದ ಸಂತೋಷದಂತೆಯೂ, ಕೊಳ್ಳೆಯನ್ನು ಹಂಚಿಕೊಳ್ಳುವಾಗ ಉಲ್ಲಾಸಿಸುವ ಹಾಗೆಯೂ ನಿಮ್ಮ ಮುಂದೆ ಸಂತೋಷಿಸುವರು.</verse>
				<verse number="4">ಏಕೆಂದರೆ ಅವನ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ, ಮಿದ್ಯಾನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀರಿ.</verse>
				<verse number="5">ಯುದ್ಧವೀರರ ಪ್ರತಿ ಯುದ್ಧವು ಗಲಿಬಿಲಿಯ ಗದ್ದಲದಿಂದ ರಕ್ತದಲ್ಲಿ ಹೊರಳಾಡಿಸಿದ ವಸ್ತ್ರಗಳು ಆಗಿರುತ್ತವೆ. ಆದರೆ ಇವು ಬೆಂಕಿಗೆ ಆಹುತಿಯಾಗುತ್ತವೆ. ಅದು ಬೆಂಕಿಗೆ ಇಂಧನವಾಗಿರುತ್ತದೆ.</verse>
				<verse number="6">ಏಕೆಂದರೆ ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನನ್ನು ನಮಗಾಗಿ ಕೊಡಲಾಗಿದೆ. ಆಡಳಿತವು ಅವರ ಬಾಹುವಿನ ಮೇಲಿರುವುದು, ಅದ್ಭುತವಾದವರು ಸಮಾಲೋಚಕರು, ಪರಾಕ್ರಮಿಯಾದ ದೇವರು, ನಿತ್ಯರಾದ ತಂದೆ, ಸಮಾಧಾನದ ಪ್ರಭು, ಎಂಬುದು ಅವರ ಹೆಸರಾಗಿರುವುದು.</verse>
				<verse number="7">ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.</verse>
				<verse number="8">ಯೆಹೋವ ದೇವರು ಯಾಕೋಬನಿಗೆ ವಿರೋಧವಾಗಿ ಒಂದು ಮಾತನ್ನು ಹೇಳಿ ಕಳುಹಿಸಿದರು, ಅದು ಇಸ್ರಾಯೇಲರಿಗೆ ತಗುಲಿತು.</verse>
				<verse number="9">ಗರ್ವದಿಂದಲೂ, ಹೆಮ್ಮೆಯಿಂದಲೂ ಹೇಳಿಕೊಳ್ಳುವ ಎಲ್ಲಾ ಜನರಿಗೂ ಎಫ್ರಾಯೀಮ್ಯರಿಗೂ ಸಮಾರ್ಯದ ನಿವಾಸಿಗಳೆಲ್ಲರಿಗೂ ಈ ಮಾತು ಗೊತ್ತಾಗುವುದು. ಅದೇನೆಂದರೆ,</verse>
				<verse number="10">“ಇಟ್ಟಿಗೆಗಳು ಬಿದ್ದು ಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿಮರಗಳನ್ನು ಕಡಿದಿದ್ದರೂ ಅಲ್ಲಿಯೇ ನಾವು ದೇವದಾರು ವೃಕ್ಷಗಳನ್ನು ನೆಡುವೆವು,”</verse>
				<verse number="11">ಹೀಗಿರುವುದರಿಂದ ಯೆಹೋವ ದೇವರು ರೆಚೀನನ ವೈರಿಗಳನ್ನು ಅವನಿಗೆ ವಿರೋಧವಾಗಿ ಎಬ್ಬಿಸಿ,</verse>
				<verse number="12">ಅವನ ಶತ್ರುಗಳಾದ ಪೂರ್ವದಿಂದ ಅರಾಮ್ಯರನ್ನು ಮುಂದೆಯೂ, ಪಶ್ಚಿಮದಿಂದ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವರು. ಅವರು ಇಸ್ರಾಯೇಲನ್ನು ತೆರೆದ ಬಾಯಿಂದ ನುಂಗಿಬಿಡುವರು. ಏಕೆಂದರೆ, ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.</verse>
				<verse number="13">ಆದರೂ ಜನರು ತಮ್ಮನ್ನು ಶಿಕ್ಷಿಸಿದ ದೇವರ ಕಡೆಗೆ ತಿರುಗದೆಯೂ, ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕದೆಯೂ ಇದ್ದರು.</verse>
				<verse number="14">ಆದಕಾರಣ ಯೆಹೋವ ದೇವರು ಇಸ್ರಾಯೇಲಿನಿಂದ ತಲೆ ಬಾಲಗಳನ್ನೂ ಖರ್ಜೂರದ ಕೊಂಬೆಗಳನ್ನೂ ಒಂದೇ ದಿನದಲ್ಲಿ ಕಡಿದುಹಾಕುವರು.</verse>
				<verse number="15">ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು, ಸುಳ್ಳು ಬೋಧಿಸುವ ಪ್ರವಾದಿಯು ಬಾಲವಾಗಿರುವನು.</verse>
				<verse number="16">ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ, ಅವರನ್ನು ಹಿಂಬಾಲಿಸುವವರು ನಾಶವಾಗುವರು.</verse>
				<verse number="17">ಹೀಗಿರಲು ಕರ್ತದೇವರು ಅವರ ಯೌವನಸ್ಥರಲ್ಲಿ ಆನಂದಿಸುವುದಿಲ್ಲ. ಅವರ ಅನಾಥರನ್ನೂ, ವಿಧವೆಯರನ್ನೂ ಕರುಣಿಸುವುದಿಲ್ಲ. ಏಕೆಂದರೆ, ಪ್ರತಿಯೊಬ್ಬನು ಕಪಟಿಯೂ, ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದ್ದರಿಂದ ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.</verse>
				<verse number="18">ದುಷ್ಟತ್ವವು ಬೆಂಕಿಯಂತೆ ಉರಿದು ದತ್ತೂರಿ, ಮುಳ್ಳುಗಳನ್ನು ನುಂಗಿಬಿಟ್ಟು, ಅಡವಿಯ ಪೊದೆಗಳನ್ನು ಹತ್ತಿಕೊಳ್ಳಲು, ಅದು ಹೊಗೆ ಹೊಗೆಯಾಗಿ ಸುತ್ತಿಕೊಂಡು ಮೇಲಕ್ಕೆ ಏರುತ್ತದೆ.</verse>
				<verse number="19">ಸೇನಾಧೀಶ್ವರ ಯೆಹೋವ ದೇವರ ಕೋಪದಿಂದ ದೇಶವು ಒಣಗಿಹೋಗಿದೆ, ಜನರು ಉರಿಯುವ ಸೌದೆಯಂತಿದ್ದಾರೆ. ಯಾವ ಮನುಷ್ಯನೂ ತನ್ನ ಸಹೋದರನನ್ನು ಉಳಿಸುವುದಿಲ್ಲ.</verse>
				<verse number="20">ಅವನು ಬಲಗಡೆಯಲ್ಲಿರುವುದನ್ನು ಕಿತ್ತುಕೊಂಡು ತಿಂದರೂ ಹಸಿದೇ ಇರುವನು, ಅವನು ಎಡಗಡೆಯಲ್ಲಿರುವುದನ್ನು ತಿಂದರೂ ಅವು ಅವನನ್ನು ತೃಪ್ತಿಪಡಿಸಲಾರವು. ಒಬ್ಬೊಬ್ಬನೂ ತನ್ನ ನೆರೆಯವನನ್ನು ಹಾನಿ ಮಾಡುತ್ತಿದ್ದಾನೆ.</verse>
				<verse number="21">ಹೀಗೆ ಮನಸ್ಸೆಯು ಎಫ್ರಾಯೀಮನ್ನು ಮತ್ತು ಎಫ್ರಾಯೀಮು ಮನಸ್ಸೆಯನ್ನು ಹಾನಿ ಮಾಡುತ್ತಿವೆ. ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟೆಲ್ಲಾ ಆದರೂ ಅವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.</verse>
			</chapter>
			<chapter number="10">
				<verse number="1">ಅನೀತಿಯ ನೇಮಕಗಳನ್ನು ನೇಮಿಸಿ, ಕ್ರೂರವಾದ ಕಾನೂನುಗಳನ್ನು ಬರೆಯುವವರಿಗೆ ಕಷ್ಟ!</verse>
				<verse number="2">ಇವರು ವಿಧವೆಯರನ್ನು ಸೂರೆಮಾಡಿ, ದಿಕ್ಕಿಲ್ಲದವರಿಂದ ಸುಲಿದುಕೊಂಡು ದೀನರಿಗೆ ನ್ಯಾಯವನ್ನು ತಪ್ಪಿಸಿ, ನನ್ನ ಜನರಲ್ಲಿ ಬಡವರ ನ್ಯಾಯವನ್ನು ತೆಗೆಯಬೇಕೆಂದಿದ್ದಾರೆ.</verse>
				<verse number="3">ವಿಚಾರಣೆಯ ದಿನದಲ್ಲಿಯೂ, ದೂರದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡುವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ಐಶ್ವರ್ಯವನ್ನು ಎಲ್ಲಿ ಬಿಡುವಿರಿ?</verse>
				<verse number="4">ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ, ಇಷ್ಟೆಲ್ಲಾ ಆದರೂ ಅವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.</verse>
				<verse number="5">“ಅಯ್ಯೋ, ನನ್ನ ಕೋಪದ ಕೋಲಾದ ಅಸ್ಸೀರಿಯವೇ, ನನ್ನ ಕೈಯಲ್ಲಿರುವ ಬೆತ್ತವು ನನ್ನ ಕೋಪವೇ.</verse>
				<verse number="6">ನಾನು ಅವನನ್ನು ಭಕ್ತಿಹೀನ ಜನರಿಗೆ ವಿರುದ್ಧವಾಗಿ ಕಳುಹಿಸಿ, ನನ್ನ ಕೋಪಕ್ಕೆ ಗುರಿಯಾದ ನನ್ನ ಪ್ರಜೆಯನ್ನು ಸೂರೆಮಾಡಿ, ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅಪ್ಪಣೆ ಕೊಡುವೆನು.</verse>
				<verse number="7">ಅದರ ಅಭಿಪ್ರಾಯವೋ ಹಾಗಲ್ಲ. ಅದರ ಹೃದಯವು ಈ ಪ್ರಕಾರ ಆಲೋಚಿಸುವುದಿಲ್ಲ. ಜನಾಂಗಗಳನ್ನು ಕಡಿದುಬಿಡುವುದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವುದು ಅದರ ಹೃದಯದ ಉದ್ದೇಶವು.</verse>
				<verse number="8">ಏಕೆಂದರೆ ಅವನು, ‘ನನ್ನ ಅಧಿಪತಿಗಳೆಲ್ಲಾ ರಾಜರಲ್ಲವೇ?</verse>
				<verse number="9">ಕಲ್ನೋ, ಕರ್ಕೆಮೀಷಿನ ಹಾಗಲ್ಲವೋ? ಹಮಾತ್ ಅರ್ಪಾದಿನ ಹಾಗಲ್ಲವೇ? ಸಮಾರ್ಯವು ದಮಸ್ಕದ ಹಾಗಲ್ಲವೋ?</verse>
				<verse number="10">ಯೆರೂಸಲೇಮಿನಲ್ಲಿಯೂ ಸಮಾರ್ಯದಲ್ಲಿಯೂ ಹೆಚ್ಚಾಗಿದ್ದ ಅವರ ವಿಗ್ರಹಗಳು ಹಾಗೂ ಕೆತ್ತಿದ ವಿಗ್ರಹಗಳ ರಾಜ್ಯಗಳು ನನ್ನ ಕೈಗೆ ಸಿಕ್ಕಿದಂತೆ,</verse>
				<verse number="11">ನಾನು ಸಮಾರ್ಯ ಮತ್ತು ಅದರ ವಿಗ್ರಹಗಳಿಗೆ ಮಾಡಿದಂತೆಯೇ ಯೆರೂಸಲೇಮಿಗೆ ಮತ್ತು ಅದರ ವಿಗ್ರಹಗಳಿಗೆ ಮಾಡುತ್ತೇನೆಯೇ?’ ”</verse>
				<verse number="12">ಆದರೆ ಕರ್ತದೇವರು ಚೀಯೋನ್ ಪರ್ವತದ ಮೇಲೆಯೂ ಯೆರೂಸಲೇಮಿನ ಮೇಲೆಯೂ ತಮ್ಮ ಕಾರ್ಯಗಳನ್ನು ನೆರವೇರಿಸಿದ ಮೇಲೆ, “ಅಸ್ಸೀರಿಯದ ಅರಸನ ಹೃದಯದ ದೊಡ್ಡಸ್ತಿಕೆಯ ಫಲವನ್ನು, ಅವನ ಉನ್ನತವಾದ ದೃಷ್ಟಿಯ ಘನತೆಯನ್ನು ನಾನು ದಂಡಿಸುವೆನು.”</verse>
				<verse number="13">ಏಕೆಂದರೆ ಅಸ್ಸೀರಿಯ ತನ್ನೊಳಗೆ ಹೀಗೆ ಅಂದುಕೊಂಡನು, “ ‘ನನ್ನ ಕೈಯ ಬಲದಿಂದಲೂ ನನ್ನ ಜ್ಞಾನದಿಂದಲೂ ಅದನ್ನು ಮಾಡಿದೆ. ಏಕೆಂದರೆ, ನಾನು ವಿವೇಕಿ. ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿಗಳನ್ನು ಕೊಳ್ಳೆಹೊಡೆದು, ಅದರ ಅರಸರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.</verse>
				<verse number="14">ಜನರ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ; ಹಕ್ಕಿ ಬಿಟ್ಟುಹೋದ ಮೊಟ್ಟೆಗಳನ್ನು ಕೂಡಿಸುವಂತೆ, ಸಮಸ್ತ ರಾಷ್ಟ್ರಗಳನ್ನು ಒಟ್ಟುಗೂಡಿಸಿದ್ದೇನೆ. ರೆಕ್ಕೆಯಾಡಿಸಿ ಬಾಯಿತೆರೆದು ಕೀಚುಗುಟ್ಟಲು ಯಾರೂ ಇರಲಿಲ್ಲ.’ ”</verse>
				<verse number="15">ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿಕೊಂಡೀತೆ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಕೋಲು ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ಬೆತ್ತ ಸಜೀವ ಮನುಷ್ಯನನ್ನೇ ಬಡಿದಂತಾಯಿತು!</verse>
				<verse number="16">ಆದಕಾರಣ ಸೇನಾಧೀಶ್ವರ ಯೆಹೋವ ದೇವರು ಅವನ ಕೊಬ್ಬಿದ ಯೋಧರಿಗೆ ಕ್ಷಯವನ್ನು ಉಂಟುಮಾಡುವರು, ದಹಿಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭವದ ಕೆಳಗೆ ಹತ್ತಿಕೊಳ್ಳುವುದು.</verse>
				<verse number="17">ಇಸ್ರಾಯೇಲಿನ ಬೆಳಕು ಬೆಂಕಿಯಾಗುವುದು, ಅದರ ಪರಿಶುದ್ಧರು ಜ್ವಾಲೆಯಂತಿರುವರು, ಅದು ಒಂದೇ ದಿನದಲ್ಲಿ ಅವನ ಮುಳ್ಳು, ದತ್ತೂರಿಗಳನ್ನು ದಹಿಸಿ ನುಂಗಿಬಿಡುವುದು.</verse>
				<verse number="18">ದೇಹಾತ್ಮದಂಥ ಅದರ ಉದ್ಯಾನವನವನ್ನೂ, ಫಲಭರಿತ ತೋಟದ ವೈಭವವನ್ನು ನಿರ್ಮೂಲ ಮಾಡುವುದು. ದೇಶವೋ ರೋಗಿಯಂತೆ ನಾಶವಾಗುವುದು.</verse>
				<verse number="19">ಅವನ ಉಳಿದ ವನವೃಕ್ಷಗಳು ಮಗುವು ಬರೆಯುವಷ್ಟು ಕಡಿಮೆಯಾಗಿರುವುದು.</verse>
				<verse number="20">ಆ ದಿನದಲ್ಲಿ ಇಸ್ರಾಯೇಲರಲ್ಲಿ ಉಳಿದವರೂ, ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು, ಇಸ್ರಾಯೇಲಿನ ಪರಿಶುದ್ಧರಾದ ಯೆಹೋವ ದೇವರ ಸತ್ಯವಾಗಿ ಆಧಾರಮಾಡಿಕೊಳ್ಳುವರು.</verse>
				<verse number="21">ಉಳಿದವರು ಅಂದರೆ ಯಾಕೋಬ್ಯರಲ್ಲಿ ಉಳಿದವರೂ ಸಹ ಪರಾಕ್ರಮಿಯಾದ ದೇವರ ಕಡೆಗೆ ಹಿಂದಿರುಗುವರು.</verse>
				<verse number="22">ತಮ್ಮ ಜನರಾದ ಇಸ್ರಾಯೇಲರು ಸಮುದ್ರದ ಉಸುಬಿನಂತಿದ್ದರೂ, ಅವರಲ್ಲಿ ಉಳಿದವರು ಮಾತ್ರ ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು; ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.</verse>
				<verse number="23">ಏಕೆಂದರೆ ಸೇನಾಧೀಶ್ವರ ಯೆಹೋವ ದೇವರೆಂಬ ಕರ್ತ ಆಗಿರುವವರು, ಎಲ್ಲಾ ದೇಶದ ಮಧ್ಯದಲ್ಲಿ ತಿಳಿಸಿದ ವಿನಾಶವನ್ನು ಉಂಟುಮಾಡುವರು.</verse>
				<verse number="24">ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ಚೀಯೋನಿನಲ್ಲಿ ವಾಸಿಸುವ ನನ್ನ ಜನರೇ, ಈಜಿಪ್ಟಿನವರಂತೆ ನಿಮ್ಮನ್ನು ಕೋಲಿನಿಂದ ಹೊಡೆದು, ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಸ್ಸೀರಿಯದವರಿಗೆ ಭಯಪಡಬೇಡಿರಿ.</verse>
				<verse number="25">ನನ್ನ ಕೋಪವು ಅವರ ದಂಡನೆಗಾಗುವುದು; ಆದ್ದರಿಂದ ಇನ್ನು ಸ್ವಲ್ಪಕಾಲದಲ್ಲಿ ಕೋಪವು ತೀರಿಹೋಗುವುದು.</verse>
				<verse number="26">ಸೇನಾಧೀಶ್ವರ ಯೆಹೋವ ದೇವರು ಓರೇಬ್ ಬಂಡೆಯ ಬಳಿಯಲ್ಲಿ ಮಿದ್ಯಾನ್ಯರನ್ನು ಹತಮಾಡಿದಂತೆ, ಅವರು ಕೋಲನ್ನು ಸಮುದ್ರದ ಮೇಲೆ ಚಾಚಿ, ಈಜಿಪ್ಟಿನವರ ಮೇಲೆ ಎತ್ತಿದಂತೆ ಎತ್ತುವರು.</verse>
				<verse number="27">ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ, ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವುದು ಮತ್ತು ನೀವು ಕೊಬ್ಬಿದ ಕಾರಣ ನೊಗವು ಮುರಿದು ಹೋಗುವುದು.</verse>
				<verse number="28">ಅವರು ಅಯ್ಯಾಥಿಗೆ ಬಂದರು. ಮಿಗ್ರೋನನ್ನು ಹಾದು ಹೋಗಿ, ಮಿಕ್ಮಾಷಿನಲ್ಲಿ ತಮ್ಮ ಸಾಮಗ್ರಿಯನ್ನು ಇಟ್ಟಿದ್ದಾರೆ.</verse>
				<verse number="29">ಅವರು ಕಣಿವೆಯನ್ನು ದಾಟಿದ್ದಾರೆ; ಗಿಬೆಯದಲ್ಲಿ ಇಳುಕೊಂಡಿದ್ದಾರೆ. ರಾಮಾ ಜನತೆ ಹೆದರುತ್ತಿದೆ; ಸೌಲನ ಗಿಬೆಯದ ಜನತೆ ಓಡಿಹೋಗಿದೆ.</verse>
				<verse number="30">ಗಲ್ಲೀಮ್ ಮಗಳೇ, ನಿನ್ನ ಸ್ವರವೆತ್ತಿ ಕೂಗು; ಬಡ ಅನಾತೋತೇ, ಲಯೆಷಿನವರೆಗೂ ಕೇಳಿಸುವಂತೆ ಕೂಗು.</verse>
				<verse number="31">ಮದ್ಮೇನ ದಿಕ್ಕುಪಾಲಾಯಿತು. ಗೆಬೀಮಿನ ನಿವಾಸಿಗಳು ಓಡಿಹೋಗಲು ಕೂಡಿಕೊಂಡರು.</verse>
				<verse number="32">ಆ ದಿನದಲ್ಲಿ ಅವರು ನೋಬಿನಲ್ಲಿ ಇಳಿದುಕೊಳ್ಳುವರು. ಚೀಯೋನ್ ನಗರಿಯ ಪರ್ವತದ ಕಡೆಗೆ, ಯೆರೂಸಲೇಮಿನ ಬೆಟ್ಟದ ಕಡೆಗೆ ಕೈ ಬೀಸುತ್ತಾರೆ.</verse>
				<verse number="33">ಇಗೋ, ಕರ್ತದೇವರು ಆಗಿರುವ ಸೇನಾಧೀಶ್ವರ ಯೆಹೋವ ದೇವರು ಭಯಂಕರವಾಗಿ ಕೊಂಬೆಯನ್ನು ಕತ್ತರಿಸುವರು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವುವು, ಎತ್ತರದ ಮರಗಳನ್ನು ನೆಲಕ್ಕೆ ಉರುಳಿಸುವರು.</verse>
				<verse number="34">ಅವರು ಅಡವಿಯ ಪೊದೆಗಳನ್ನು ಕೊಡಲಿಯಿಂದ ಕಡಿದುಬಿಡುವರು. ಲೆಬನೋನು ಪರಾಕ್ರಮಿಯಾಗಿರುವವರ ಮುಂದೆ ಬಿದ್ದುಹೋಗುವುದು.</verse>
			</chapter>
			<chapter number="11">
				<verse number="1">ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಕೊಂಬೆಯು ಫಲಕೊಡುವುದು.</verse>
				<verse number="2">ಅವನ ಮೇಲೆ ಯೆಹೋವ ದೇವರ ಆತ್ಮ, ಜ್ಞಾನ ಮತ್ತು ವಿವೇಕದಾಯಕ ಆತ್ಮ, ಸಮಾಲೋಚನೆ ಮತ್ತು ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆ ಮತ್ತು ಯೆಹೋವ ದೇವರ ಭಯದ ಆತ್ಮ,</verse>
				<verse number="3">ಅವರು ಯೆಹೋವ ದೇವರ ಭಯದಲ್ಲಿ ಆನಂದಿಸುವರು. ಅವರು ಕಣ್ಣಿಗೆ ಕಂಡಂತೆ ತೀರ್ಪು ಮಾಡುವುದಿಲ್ಲ, ತಮ್ಮ ಕಿವಿಗಳ ಕೇಳ್ವಿಕೆಯ ಪ್ರಕಾರವೂ ತೀರ್ಪು ಮಾಡುವುದಿಲ್ಲ.</verse>
				<verse number="4">ಆದರೆ ಭೂಮಿಯ ಬಡವರಿಗೆ ನೀತಿಯಿಂದ ನ್ಯಾಯತೀರಿಸುವರು. ಭೂಲೋಕದ ದೀನರಿಗೆ ನ್ಯಾಯವಾಗಿ ತೀರ್ಪುಮಾಡುವರು, ಭೂಮಿಯನ್ನು ತಮ್ಮ ಬಾಯಿಯ ಕೋಲಿನಿಂದ ಹೊಡೆಯುವರು. ತಮ್ಮ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವರು.</verse>
				<verse number="5">ನೀತಿಯೇ ಅವರಿಗೆ ನಡುಕಟ್ಟು, ನಂಬಿಗಸ್ತಿಕೆಯೇ ಅವರ ಸೊಂಟದ ಪಟ್ಟಿ.</verse>
				<verse number="6">ತೋಳವು ಕುರಿಯ ಸಂಗಡ ವಾಸಿಸುವುದು; ಚಿರತೆಯು ಮೇಕೆ ಮರಿಯೊಂದಿಗೆ ಮಲಗುವುದು; ಕರುವೂ, ಪ್ರಾಯದ ಸಿಂಹವೂ, ಪುಷ್ಟಪಶುವೂ ಒಟ್ಟಿಗಿರುವುವು; ಇವುಗಳನ್ನು ಒಂದು ಪುಟ್ಟ ಮಗುವು ನಡೆಸುವುದು.</verse>
				<verse number="7">ಹಸುವು ಕರಡಿಯ ಸಂಗಡ ಮೇಯುವುವು; ಅವುಗಳ ಮರಿಗಳು ಜೊತೆಯಾಗಿ ಮಲಗುವುವು; ಸಿಂಹವು ಎತ್ತಿನಂತೆ ಹುಲ್ಲನ್ನು ಮೇಯುವುದು.</verse>
				<verse number="8">ಹಸುಳೆಯು ನಾಗರ ಹಾವಿನ ಹುತ್ತದ ಮೇಲೆ ಆಡುವುದು ಮತ್ತು ಪುಟ್ಟ ಮಗುವು ಹಾವಿನ ಬಿಲದ ಒಳಗೆ ಕೈ ಹಾಕುವುದು.</verse>
				<verse number="9">ನನ್ನ ಪರಿಶುದ್ಧ ಪರ್ವತದಲ್ಲಿ ಯಾರೂ ಕೇಡುಮಾಡುವುದಿಲ್ಲ, ಯಾರೂ ಹಾಳುಮಾಡುವುದಿಲ್ಲ. ಏಕೆಂದರೆ ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.</verse>
				<verse number="10">ಆ ದಿನದಲ್ಲಿ ಇಷಯನ ವಂಶದಿಂದ ಜನರಿಗೆ ಒಂದು ಬೇರು ಗುರುತಿನ ಧ್ವಜವಾಗಿ ನಿಲ್ಲುವುದು. ಅವರ ವಿಶ್ರಾಂತಿ ಸ್ಥಳವು ಮಹಿಮೆಯುಳ್ಳದ್ದಾಗಿರುವುದು.</verse>
				<verse number="11">ಆ ದಿನದಲ್ಲಿ ಯೆಹೋವ ದೇವರು ಉಳಿದ ತಮ್ಮ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೇ ಸಾರಿ ಕೈಹಾಕಿ ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾತ್ ಮತ್ತು ಮೆಡಿಟರೇನಿಯನ್ ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವರು.</verse>
				<verse number="12">ಜನಾಂಗಗಳಿಗೆ ಗುರುತಾಗಿ ಧ್ವಜವನ್ನೆತ್ತಿ ಇಸ್ರಾಯೇಲಿನಿಂದ ತಳ್ಳಿಬಿಟ್ಟವರನ್ನು ಕೂಡಿಸುವನು. ಯೆಹೂದದಿಂದ ಚದರಿದವರನ್ನು ಭೂಮಿಯ ನಾಲ್ಕು ಕಡೆಗಳಿಂದ ಒಟ್ಟುಗೂಡಿಸುವನು.</verse>
				<verse number="13">ಎಫ್ರಾಯೀಮಿನ ಹೊಟ್ಟೆಕಿಚ್ಚು ತೊಲಗಿ, ಯೆಹೂದದ ವಿರೋಧಿಗಳು ಇಲ್ಲದಂತಾಗುವರು. ಹೀಗೆ ಎಫ್ರಾಯೀಮು ಯೆಹೂದದ ಮೇಲೆ ಹೊಟ್ಟೆಕಿಚ್ಚು ಪಡುವುದಿಲ್ಲ; ಯೆಹೂದವು ಎಫ್ರಾಯೀಮಿಗೆ ವಿರೋಧವಾಗಿರುವುದಿಲ್ಲ.</verse>
				<verse number="14">ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಟಿಯರ ಇಳಿಜಾರು ಪ್ರದೇಶದ ಮೇಲೆ ಎರಗುವರು. ಅವರು ಜೊತೆಯಾಗಿ ಪೂರ್ವದವರನ್ನು ಸೂರೆ ಮಾಡುವರು, ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ದಾಳಿಮಾಡುವರು ಮತ್ತು ಅಮ್ಮೋನಿಯರು ಅವರಿಗೆ ಅಧೀನರಾಗುವರು.</verse>
				<verse number="15">ಯೆಹೋವ ದೇವರು ಈಜಿಪ್ಟಿನ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ತೆಗೆದುಹಾಕುವರು, ಅವರು ತಮ್ಮ ಉಷ್ಣಗಾಳಿಯಿಂದ ಯೂಫ್ರೇಟೀಸ್ ನದಿಯ ಮೇಲೆ ಕೈಯನ್ನು ಝಾಡಿಸಿ, ಅದನ್ನು ಏಳು ಹೊಳೆಗಳಾಗಿ ಒಡೆದು, ಮನುಷ್ಯರ ಕೆರಗಳು ನೆನೆಯದಂತೆ ದಾಟಿಸುವರು.</verse>
				<verse number="16">ಇದಲ್ಲದೆ ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟು ಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಸ್ಸೀರಿಯದಿಂದ ತಪ್ಪಿಸಿಕೊಂಡು ಬರುವ ತಮ್ಮ ಉಳಿದ ಜನರಿಗೆ ವಿಶಾಲವಾದ ಮಾರ್ಗವು ಇರುವುದು.</verse>
			</chapter>
			<chapter number="12">
				<verse number="1">ಆ ದಿನದಲ್ಲಿ ನೀನು ಹೇಳುವುದೇನೆಂದರೆ: “ಯೆಹೋವ ದೇವರೇ, ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುವೆನು; ನೀವು ನನ್ನ ಮೇಲೆ ಕೋಪಗೊಂಡಿದ್ದರೂ, ಆ ನಿಮ್ಮ ಕೋಪವು ಪರಿಹಾರವಾಗಿ ನನ್ನನ್ನು ಸಂತೈಸುತ್ತೀರಲ್ಲವೆ?</verse>
				<verse number="2">ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, ನಾನು ಭರವಸವಿಡುವೆನು ಮತ್ತು ಭಯಪಡೆನು. ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.”</verse>
				<verse number="3">ರಕ್ಷಣೆಯೆಂಬ ಬಾವಿಗಳಿಂದ ಆನಂದದೊಡನೆ ನೀವು ನೀರನ್ನು ಸೇದುವಿರಿ.</verse>
				<verse number="4">ಆ ದಿನದಲ್ಲಿ ನೀವು ಹೀಗೆ ಹೇಳುವಿರಿ, “ಯೆಹೋವ ದೇವರನ್ನು ಕೊಂಡಾಡಿರಿ. ಅವರ ಹೆಸರನ್ನೆತ್ತಿ ಜನರ ಮಧ್ಯದಲ್ಲಿ ಅವರ ಕ್ರಿಯೆಗಳನ್ನು ಪ್ರಕಟಿಸಿರಿ. ಅವರ ನಾಮವನ್ನು ಉನ್ನತೋನ್ನತವೆಂದು ಎತ್ತಿ ಹೇಳಿರಿ.</verse>
				<verse number="5">ಯೆಹೋವ ದೇವರಿಗೆ ಹಾಡಿರಿ. ಏಕೆಂದರೆ, ಅವರು ಮಹಿಮೆಯ ಕಾರ್ಯಗಳನ್ನು ಮಾಡಿದ್ದಾರೆ. ಇದು ಭೂಮಂಡಲದಲ್ಲೆಲ್ಲಾ ತಿಳಿದಿರಲಿ.</verse>
				<verse number="6">ಚೀಯೋನಿನ ನಿವಾಸಿಗಳೇ, ಆರ್ಭಟಿಸಿ ಹರ್ಷಧ್ವನಿಯನ್ನು ಗೈಯಿರಿ. ಏಕೆಂದರೆ, ಇಸ್ರಾಯೇಲಿನ ಪರಿಶುದ್ಧರು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವರಾಗಿದ್ದಾರೆ.”</verse>
			</chapter>
			<chapter number="13">
				<verse number="1">ಆಮೋಚನ ಮಗ ಯೆಶಾಯನಿಗೆ ಬಾಬಿಲೋನಿನ ವಿಷಯವಾಗಿ ಬಂದ ಪ್ರವಾದನೆ:</verse>
				<verse number="2">ಶತ್ರುಗಳು ಬಂದು ಶ್ರೇಷ್ಠರ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ.</verse>
				<verse number="3">ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ, ನನ್ನ ಜಯದಲ್ಲಿ ಉಲ್ಲಾಸಿಸುವವರನ್ನೂ, ನನ್ನ ಶೂರರನ್ನೂ ಸಹ ನನ್ನ ಕೋಪವನ್ನು ತೆಗೆದುಕೊಂಡು ಹೋಗಲು ಕರೆದಿದ್ದೇನೆ.</verse>
				<verse number="4">ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ. ಒಟ್ಟಿಗೆ ಕೂಡಿಕೊಂಡ ರಾಜ್ಯಗಳ ಜನಾಂಗಗಳ ಆರ್ಭಟ, ಸೇನಾಧೀಶ್ವರ ಯೆಹೋವ ದೇವರು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾರೆ.</verse>
				<verse number="5">ಯೆಹೋವ ದೇವರು ಮತ್ತು ಅವರ ರೋಷಕ್ಕೆ ಆಯುಧಗಳಾದವರು ದೂರದೇಶದಿಂದ ಎಂದರೆ, ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾರೆ.</verse>
				<verse number="6">ನೀವು ಗೋಳಾಡಿರಿ. ಏಕೆಂದರೆ, ಯೆಹೋವ ದೇವರ ದಿನವು ಸಮೀಪವಾಯಿತು. ಅದು ಸರ್ವಶಕ್ತರಿಂದ ನಾಶರೂಪವಾಗಿ ಬರುವುದು.</verse>
				<verse number="7">ಆದಕಾರಣ ಎಲ್ಲಾ ಕೈಗಳು ಜೋಲು ಬೀಳುವುವು ಮತ್ತು ಪ್ರತಿಯೊಬ್ಬನ ಹೃದಯವು ಕರಗುವುದು.</verse>
				<verse number="8">ಅವರು ಭಯಪಡುವರು. ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವುವು. ಪ್ರಸವವೇದನೆಯಲ್ಲಿರುವ ಸ್ತ್ರೀಯರಂತೆ ಸಂಕಟಪಡುವರು. ಅವರು ಒಬ್ಬರಿಗೊಬ್ಬರು ಭ್ರಮೆ ಪಡುವರು. ಅವರ ಮುಖಗಳು ಜ್ವಾಲೆಯಂತಿರುವುವು.</verse>
				<verse number="9">ಇಗೋ, ಯೆಹೋವ ದೇವರ ದಿನವು ಬರುತ್ತದೆ. ಅದು ಭೂಮಿಯನ್ನು ಹಾಳು ಮಾಡುವುದಕ್ಕೂ, ಅಲ್ಲಿಂದ ಪಾಪಿಗಳನ್ನು ನಿರ್ಮೂಲ ಮಾಡುವುದಕ್ಕೂ, ಕಡುಕೋಪದಿಂದಲೂ, ತೀಕ್ಷ್ಣರೋಷದಿಂದಲೂ ಕ್ರೂರವಾಗಿರುವುದು.</verse>
				<verse number="10">ಏಕೆಂದರೆ, ಆಕಾಶದ ನಕ್ಷತ್ರಗಳು ಮತ್ತು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವುದಿಲ್ಲ.</verse>
				<verse number="11">ಅವರ ಕೆಟ್ಟ ಕಾರ್ಯಗಳಿಗೋಸ್ಕರವೂ, ದುಷ್ಟರ ಅಪರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸುವೆನು, ಗರ್ವಿಷ್ಠರ ಅಹಂಕಾರವನ್ನು ನಿಲ್ಲಿಸಿಬಿಡುವೆನು. ಭಯಂಕರವಾದವರ ಹೆಮ್ಮೆಯನ್ನು ತಗ್ಗಿಸುವೆನು.</verse>
				<verse number="12">ಮನುಷ್ಯರನ್ನು ಚೊಕ್ಕ ಬಂಗಾರಕ್ಕಿಂತಲೂ, ಓಫೀರ್ ಬಂಗಾರಕ್ಕಿಂತಲೂ ಜನರು ವಿರಳವಾಗಿರುವಂತೆ ಮಾಡುವೆನು.</verse>
				<verse number="13">ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರ ಕೋಪವೂ, ಅವರ ತೀಕ್ಷ್ಣರೋಷವೂ ಪ್ರಕಟವಾಗುವ ಆ ದಿನದಂದು, ಆಕಾಶಮಂಡಲ ನಡುಗುವುದು. ಭೂಮಂಡಲ ಅದರ ಸ್ಥಳದಿಂದ ಕದಲುವುದು.</verse>
				<verse number="14">ಅದು ಅಟ್ಟಿದ ಜಿಂಕೆಯಂತೆಯೂ, ಕುರುಬರಿಲ್ಲದ ಕುರಿಗಳಂತೆಯೂ ಇರುವುದು. ಅವರಲ್ಲಿ ಪ್ರತಿಯೊಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು; ಪ್ರತಿಯೊಬ್ಬನು ತನ್ನ ಸ್ವದೇಶಕ್ಕೆ ಓಡಿಹೋಗುವನು.</verse>
				<verse number="15">ಸಿಕ್ಕಿದ ಪ್ರತಿಯೊಬ್ಬನೂ ಇರಿತಕ್ಕೆ ಗುರಿಯಾಗುವನು. ಅಟ್ಟಿಹಿಡಿಯಲಾದ ಪ್ರತಿಯೊಬ್ಬನೂ ಖಡ್ಗಕ್ಕೆ ತುತ್ತಾಗುವನು.</verse>
				<verse number="16">ಅವರ ಮಕ್ಕಳೂ ಸಹ ಅವರ ಕಣ್ಣೆದುರಿಗೆ ಹತರಾಗುವರು. ಅವರ ಮನೆಗಳು ಸೂರೆಮಾಡಲಾಗುವುದು. ಅವರ ಹೆಂಡತಿಯರು ಅತ್ಯಾಚಾರಕ್ಕೆ ಈಡಾಗುವರು.</verse>
				<verse number="17">ಇಗೋ, ಬೆಳ್ಳಿಯನ್ನು ಲಕ್ಷಿಸದೆ, ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧವಾಗಿ ನಾನು ಎಬ್ಬಿಸುವೆನು.</verse>
				<verse number="18">ಅವರ ಬಿಲ್ಲುಗಳು ಸಹ ಯುವಕರನ್ನು ಸಂಹರಿಸುವುವು. ಇವರು ಹಸುಳೆಗಳನ್ನು ಕರುಣಿಸರು. ಇವರು ಮಕ್ಕಳನ್ನು ಕನಿಕರಿಸುವುದಿಲ್ಲ.</verse>
				<verse number="19">ರಾಜ್ಯಗಳ ಘನತೆಯೂ, ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬಿಲೋನನ್ನು ದೇವರು ಸೊದೋಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಕೆಡವಿಬಿಡುವನು.</verse>
				<verse number="20">ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಯಾವ ಅರಬಿಯನೂ ಗುಡಾರಹಾಕನು. ಕುರುಬರು ಅಲ್ಲಿ ಮಂದೆಗಳನ್ನು ತಂಗಿಸರು.</verse>
				<verse number="21">ಆದರೆ ಕಾಡುಮೃಗಗಳು ಅಲ್ಲಿ ಮಲಗುವುವು. ಅವರ ಮನೆಗಳು ನರಿಗಳಿಂದ ತುಂಬಿರುವುವು, ಅಲ್ಲಿ ಗೂಬೆಗಳು ವಾಸಿಸುವುವು ಮತ್ತು ಕಾಡುಮೇಕೆಗಳು ಅಲ್ಲಿ ಕುಣಿದಾಡುವುವು.</verse>
				<verse number="22">ಅವರ ಕೋಣೆಗಳಲ್ಲಿ ತೋಳಗಳು ಕೂಗುವುವು, ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ನರಿಗಳು ವಾಸಿಸುವುವು. ಬಾಬಿಲೋನಿಗೆ ಕಾಲವು ಸಮೀಪಿಸಿತು. ಇನ್ನು ಅದರ ದಿನಗಳು ಮುಂದುವರಿಯುವುದಿಲ್ಲ.</verse>
			</chapter>
			<chapter number="14">
				<verse number="1">ಯೆಹೋವ ದೇವರು ಯಾಕೋಬ್ಯರನ್ನು ಕರುಣಿಸುವರು. ಇಸ್ರಾಯೇಲರನ್ನು ಪುನಃ ಆಯ್ದುಕೊಳ್ಳುವರು. ಅವರನ್ನು ಅವರ ಸ್ವಂತ ದೇಶದಲ್ಲಿ ಸೇರಿಸುವರು. ಪರದೇಶದವರು ಅವರೊಂದಿಗೆ ಕೂಡಿಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.</verse>
				<verse number="2">ದೇಶಗಳು ಇನ್ನೊಮ್ಮೆ ಅವರನ್ನು ತೆಗೆದುಕೊಂಡು ಅವನ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಯೆಹೋವ ದೇವರ ದೇಶದಲ್ಲಿ, ಆ ಜನಾಂಗದವರನ್ನು ಗಂಡು ಹೆಣ್ಣುಗಳನ್ನಾಗಿ ದಾಸದಾಸಿಯರನ್ನಾಗಿ ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದವರನ್ನು ಸೆರೆಹಿಡಿಯುವರು. ತಮ್ಮನ್ನು ದಬ್ಬಾಳಿಕೆಗಾರರ ಮೇಲೆ ಅಧಿಕಾರ ನಡೆಸುವರು.</verse>
				<verse number="3">ಯೆಹೋವ ದೇವರು ನಿಮ್ಮ ಸಂಕಟದಿಂದಲೂ, ಕಳವಳದಿಂದಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ</verse>
				<verse number="4">ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬಿಲೋನಿನ ರಾಜನಿಗೆ ವಿರುದ್ಧವಾದ ಈ ಪದ್ಯವನ್ನು ನೀವು ಹೀಗೆ ಸ್ವರವೆತ್ತಿ ಹಾಡಬೇಕು: ಹೀಗೆ ದಬ್ಬಾಳಿಕೆಗಾರನು ಕೊನೆಗೊಂಡನು. ಅವನ ಕೋಪ ಹೀಗೆ ಮುಗಿಯಿತು.</verse>
				<verse number="5">ಆಳುತ್ತಿದ್ದ ದುಷ್ಟರ ಕೋಲನ್ನೂ, ಅಧಿಪತಿಗಳ ದಂಡವನ್ನೂ ಯೆಹೋವ ದೇವರು ಮುರಿದುಬಿಟ್ಟರು.</verse>
				<verse number="6">ಆ ಅಧಿಪತಿಗಳು ಕಡುಕೋಪದಿಂದ ಎಡೆಬಿಡದೆ ಜನರನ್ನು ದಂಡಿಸಿ, ನಿಲ್ಲದ ದಬ್ಬಾಳಿಕೆಯಿಂದ ರಾಷ್ಟ್ರಗಳನ್ನು ಅಧೀನಪಡಿಸಿಕೊಂಡಿದ್ದರು.</verse>
				<verse number="7">ಭೂಲೋಕವೆಲ್ಲಾ ಶಾಂತವಾಗಿ ವಿಶ್ರಾಂತಿಗೊಂಡಿದೆ. ಅವರು ಉಲ್ಲಾಸದ ಧ್ವನಿಯಿಂದ ಹಾಡುತ್ತಾರೆ.</verse>
				<verse number="8">ತುರಾಯಿ ಮರಗಳೂ, ಲೆಬನೋನಿನ ದೇವದಾರು ಮರಗಳೂ, “ಈಗ ನೀನು ಬಿದ್ದದ್ದರಿಂದ ನಮ್ಮನ್ನು ಕಡಿಯಲು ಯಾರೂ ಬರುವುದಿಲ್ಲ,” ಎಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.</verse>
				<verse number="9">ನಿನಗೋಸ್ಕರ ನಿನ್ನ ಬರೋಣವನ್ನು ಎದುರುಗೊಳ್ಳುವುದಕ್ಕೆ ಪಾತಾಳವು ಕೆಳಗಿನಿಂದ ತಳಮಳಪಡುತ್ತದೆ. ಸತ್ತವರನ್ನು ಎಂದರೆ, ಭೂಲೋಕದಲ್ಲಿ ಮುಖಂಡರಾಗಿದ್ದವರೆಲ್ಲರ ಆತ್ಮಗಳನ್ನು ಕಲಕಿ ಎಚ್ಚರಿಸಿ, ಜನಾಂಗಗಳ ಎಲ್ಲಾ ರಾಜರನ್ನು ಅವರ ಸಿಂಹಾಸನಗಳಿಂದ ಎಬ್ಬಿಸುತ್ತದೆ.</verse>
				<verse number="10">ಅವರೆಲ್ಲರು, “ನಮ್ಮ ಹಾಗೆ ನೀನು ಸಹ ಬಲಹೀನನಾಗಿದ್ದೀ. ನೀನು ನಮ್ಮ ಸಮಾನನಾಗಿದ್ದೀ,” ಎಂದು ಮಾತನಾಡಿ ಹೇಳುವರು.</verse>
				<verse number="11">ನಿನ್ನ ವೈಭವವೂ, ನಿನ್ನ ವೀಣೆಗಳ ಸ್ವರವೂ ಸಮಾಧಿಗೆ ಇಳಿದಿವೆ. ನಿನಗೆ ಹುಳುಗಳೇ ಹಾಸಿಗೆ, ನಿನ್ನ ಹೊದಿಕೆಯು ಕ್ರಿಮಿಗಳೇ.</verse>
				<verse number="12">ಮುಂಜಾನೆಯ ನಕ್ಷತ್ರವೇ, ಉದಯ ಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ? ಜನಾಂಗಗಳನ್ನು ಬಲಹೀನ ಮಾಡಿದ ನೀನು ಭೂಮಿಗೆ ಹೇಗೆ ಬಿದ್ದೆ?</verse>
				<verse number="13">ನೀನು ನಿನ್ನ ಹೃದಯದಲ್ಲಿ ಹೀಗೆ ಎಂದುಕೊಂಡಿಯಲ್ಲಾ, “ನಾನು ಆಕಾಶಕ್ಕೆ ಏರಿ, ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು. ಉತ್ತರ ದಿಕ್ಕಿನ ಕಡೆಗಿರುವ ಜಫೋನ್ ಪರ್ವತದ ಮೇಲೆಯೂ ನಾನು ಆಸೀನನಾಗುವೆನು.</verse>
				<verse number="14">ಉನ್ನತವಾದ ಮೇಘ ಮಂಡಲದ ಮೇಲೆ ಏರಿ, ಮಹೋನ್ನತರಿಗೆ ಸಮಾನನಾಗುವೆನು.”</verse>
				<verse number="15">ಆದರೆ ಪಾತಾಳದ ಕುಣಿಯ ಕಡೆಗೂ, ಸಮಾಧಿಗೂ ಇಳಿಯುವೆ.</verse>
				<verse number="16">ನಿನ್ನನ್ನು ಕಂಡವರು ದಿಟ್ಟಿಸಿ ನೋಡಿ, ನಿನ್ನ ಗತಿಯನ್ನು ಯೋಚಿಸುತ್ತಾ, “ಭೂಮಿಯನ್ನು ನಡುಗಿಸಿ, ರಾಜ್ಯಗಳನ್ನು ಕದಲಿಸಿ,</verse>
				<verse number="17">ಲೋಕವನ್ನು ಕಾಡನ್ನಾಗಿ ಮಾಡಿ, ನಗರಗಳನ್ನು ಕೆಡವಿ, ಸೆರೆಹಿಡಿದವರನ್ನು ಮನೆಗೆ ಬಿಡದೆ ಇದ್ದವನು ಇವನೋ?” ಎಂದುಕೊಳ್ಳುವರು.</verse>
				<verse number="18">ಜನಾಂಗಗಳ ಅರಸರೆಲ್ಲಾ ವೈಭವದಿಂದ ತಮ್ಮ ತಮ್ಮ ಸಮಾಧಿಗಳಲ್ಲಿ ಮಲಗುತ್ತಾರೆ.</verse>
				<verse number="19">ಆದರೆ ನೀನು ತಿರಸ್ಕರಿಸಿದ ಕೊಂಬೆಯಂತೆಯೂ, ಖಡ್ಗ ತಿವಿದು ಕಲ್ಲುಗುಂಡಿಗೆ ಪಾಲಾದ ಹೆಣಗಳ ಹೊದಿಕೆಯಂತೆಯೂ, ಪರರ ತುಳಿತಕ್ಕೆ ಈಡಾಗಿ, ಸಮಾಧಿಯೊಳಗಿಂದ ಹೊರಗೆ ಬಿಸಾಡಿರುವ ಶವದ ಹಾಗಿದ್ದೀ.</verse>
				<verse number="20">ನೀನು ಆ ರಾಜರಂತೆ ಸಮಾಧಿಗೆ ಸೇರದಿರುವಿ. ಏಕೆಂದರೆ ನಿನ್ನ ದೇಶವನ್ನು ನೀನು ನಾಶಮಾಡಿ, ನಿನ್ನ ಜನರನ್ನು ಕೊಂದುಹಾಕಿದಿ. ದುಷ್ಟರ ಸಂತಾನವು ನಿರಂತರವೂ ನಿರ್ನಾಮವಾಗಲಿ.</verse>
				<verse number="21">ಅವರು ಏಳದೆ ಇಲ್ಲವೆ ದೇಶವನ್ನು ವಶಪಡಿಸಿಕೊಳ್ಳದೆ ಇಲ್ಲವೆ ಲೋಕವನ್ನು ಪಟ್ಟಣಗಳಿಂದ ತುಂಬಿಸದಂತೆ, ಅವರ ತಂದೆಗಳ ಅಪರಾಧದ ನಿಮಿತ್ತ, ಅವನ ಮಕ್ಕಳ ಕೊಲೆಗೆ ಸಿದ್ಧಮಾಡಿರಿ.</verse>
				<verse number="22">“ಅವರಿಗೆ ವಿರುದ್ಧವಾಗಿ ಏಳುತ್ತೇನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಬಾಬಿಲೋನಿನಿಂದ ಆಕೆಯ ಹೆಸರನ್ನೂ, ಉಳಿದ ಜನರನ್ನೂ, ಆಕೆಯ ಮಕ್ಕಳನ್ನೂ ಅದರ ಸಂತತಿಯವರನ್ನೂ ನಿರ್ಮೂಲ ಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="23">“ಅದನ್ನು ಮುಳ್ಳುಹಂದಿಗಳ ನಿವಾಸವಾಗಿಯೂ, ಕೊಳಚೆ ಪ್ರದೇಶವನ್ನಾಗಿಯೂ ಪರಿವರ್ತಿಸುವೆನು. ನಾಶನದ ಕಸಬರಿಗೆಯಿಂದ ಅದನ್ನು ಗುಡಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.</verse>
				<verse number="24">ಸೇನಾಧೀಶ್ವರ ಯೆಹೋವ ದೇವರು ಆಣೆ ಇಟ್ಟು ಹೇಳುವುದೇನೆಂದರೆ, “ನಾನು ಯೋಚಿಸಿದ ರೀತಿಯಲ್ಲಿ ಖಂಡಿತವಾಗಿ ಆಗುವುದು. ನಾನು ಉದ್ದೇಶಿಸಿದ ರೀತಿಯಲ್ಲಿಯೇ ನೆರವೇರುವುದು.</verse>
				<verse number="25">ಅಸ್ಸೀರಿಯವನ್ನು ನನ್ನ ದೇಶದಲ್ಲಿ ಮುರಿದುಬಿಡುವೆನು. ನನ್ನ ಪರ್ವತಗಳ ಮೇಲೆ ಅವರನ್ನು ತುಳಿದುಬಿಡುವೆನು. ಅವನ ನೊಗವು ನನ್ನ ಜನರ ಮೇಲಿಂದ ತೊಲಗಿ, ಅವರ ಭಾರವು ಅವರ ಭುಜಗಳ ಮೇಲಿನಿಂದ ತೊಲಗುವುದು.”</verse>
				<verse number="26">ಇದೇ ಸಮಸ್ತ ಭೂಮಿಯ ವಿಷಯ ಆಲೋಚಿಸಿದ ಉದ್ದೇಶ. ಇದೇ ಜನಾಂಗಗಳ ಮೇಲೆಲ್ಲಾ ಚಾಚಿದ ನನ್ನ ಕೈ.</verse>
				<verse number="27">ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ಉದ್ದೇಶಿಸಿದ್ದಾರೆ. ಅದನ್ನು ಯಾರು ವ್ಯರ್ಥಪಡಿಸುವರು? ಅವರು ಎತ್ತಿದ ಕೈಯನ್ನು, ಹಿಂದಕ್ಕೆ ತಳ್ಳುವವರು ಯಾರು? ಎಂಬುದೇ.</verse>
				<verse number="28">ಅರಸನಾದ ಆಹಾಜನು ಸತ್ತ ವರುಷದಲ್ಲಿ ಈ ದೈವೋಕ್ತಿ ಬಂದಿತು:</verse>
				<verse number="29">ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿದು ಹೋಯಿತೆಂದು ನೀವು ಉಲ್ಲಾಸಿಸಬೇಡಿರಿ. ಏಕೆಂದರೆ ಹಾವಿನ ಸಂತಾನದಿಂದ ವಿಷಸರ್ಪವು ಉಂಟಾಗುವುದು. ಅದರ ಫಲವು ಹಾರುವ ವಿಷಸರ್ಪವೇ.</verse>
				<verse number="30">ಬಡವರಲ್ಲಿ ಬಡವರಾದವರು ಆಹಾರ ಕಂಡುಕೊಳ್ಳುವರು. ಕೊರತೆಯಲ್ಲಿರುವವರು ಸುರಕ್ಷಿತವಾಗಿ ನಿದ್ರಿಸುವರು. ಆದರೆ ನಿನ್ನ ಸಂತಾನದವರೋ ಕ್ಷಾಮದಿಂದ ಹತರಾಗುವರು. ನಿನ್ನಲ್ಲಿ ಉಳಿದವರನ್ನು ಅದು ಹತಮಾಡುವುದು.</verse>
				<verse number="31">ದ್ವಾರವೇ, ಗೋಳಾಡು! ಪಟ್ಟಣವೇ, ಕೂಗು! ಫಿಲಿಷ್ಟಿಯರೇ ಕರಗಿ ಹೋಗಿರಿ. ಹೊಗೆಯು ಉತ್ತರದಿಂದ ಬರುತ್ತದೆ. ಅದರಲ್ಲಿ ಅತ್ತಿತ್ತ ನಡೆಯುವವರು ಯಾರೂ ಇಲ್ಲ.</verse>
				<verse number="32">ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡಬೇಕು? “ಯೆಹೋವ ದೇವರು ಚೀಯೋನನ್ನು ಸ್ಥಾಪಿಸಿದ್ದಾರೆ. ಬಾಧೆಪಟ್ಟ ಅವರ ಜನರು ಅದನ್ನು ಆಶ್ರಯಿಸಿಕೊಳ್ಳುವರು.”</verse>
			</chapter>
			<chapter number="15">
				<verse number="1">ಮೋವಾಬಿನ ವಿಷಯವಾದ ಪ್ರವಾದನೆ: ಆ ರಾತ್ರಿಯಲ್ಲಿ ಮೋವಾಬಿನ ಆರ್ ಪಟ್ಟಣವು ಹಾಳಾಗಿ ನಿಶ್ಶಬ್ದವಾಯಿತು. ಹೌದು, ಆ ರಾತ್ರಿಯಲ್ಲಿ ಮೋವಾಬಿನ ಕೀರ್ ಪಟ್ಟಣವು ಹಾಳಾಗಿ ನಿಶ್ಶಬ್ದವಾಯಿತು.</verse>
				<verse number="2">ದೀಬೋನ್ ಊರಿನವರು ಅಳುವುದಕ್ಕಾಗಿ ಎತ್ತರವಾದ ಪೂಜಾಸ್ಥಳಕ್ಕೆ ಹೋಗಿದ್ದಾರೆ; ನೆಬೋ ಹಾಗೂ ಮೇದೆಬ ಪಟ್ಟಣದವರಿಗಾಗಿ ಮೋವಾಬ್ಯರು ಗೋಳಾಡುತ್ತಾರೆ. ಪ್ರತಿಯೊಬ್ಬರ ತಲೆಯು ಬೋಳು, ಪ್ರತಿಯೊಬ್ಬರ ಗಡ್ಡವೂ ವಿಕಾರವಾಗಿ ಕತ್ತರಿಸಿದೆ.</verse>
				<verse number="3">ಅವರು ತಮ್ಮ ಬೀದಿಗಳಲ್ಲಿ ಗೋಣಿತಟ್ಟನ್ನು ತಾವೇ ಸುತ್ತಿಕೊಳ್ಳುವರು. ಪ್ರತಿಯೊಬ್ಬನು ತನ್ನ ಮನೆಯ ಮೇಲೆಯೂ, ಬೀದಿಗಳಲ್ಲಿಯೂ ಅರಚುತ್ತಾ ಬಹುಶೋಕದಿಂದ ಗೋಳಾಡುವನು.</verse>
				<verse number="4">ಹೆಷ್ಬೋನ್ ಮತ್ತು ಎಲೆಯಾಲೆ ಕೂಗುತ್ತವೆ, ಅವರ ಸ್ವರವು ಯಹಚ ಊರಿನವರೆಗೂ ಕೇಳಿಸುತ್ತದೆ. ಆದಕಾರಣ ಮೋವಾಬಿನ ಯುದ್ಧಭಟರು ಕಿರಿಚಿಕೊಳ್ಳುವರು. ಅವರ ಹೃದಯಗಳು ತತ್ತರಿಸುತ್ತವೆ.</verse>
				<verse number="5">ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗುತ್ತದೆ. ಅಲ್ಲಿಂದ ಪಲಾಯನವಾದವರು ಚೋಗರ್ ಕಡೆಗೂ ಎಗ್ಲತ್ ಶೆಲಿಶೀಯ ಕಡೆಗೂ ಓಡಿಹೋಗುವರು. ಲೂಹೀತ್ ದಿಣ್ಣೆಯನ್ನು ಅಳುತ್ತಾ ಹತ್ತುವರು. ಏಕೆಂದರೆ ಹೊರೊನಯಿಮ್ ಊರಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ದನಿಗೈಯುವರು.</verse>
				<verse number="6">ನಿಮ್ರೀಮ್ ಹೊಳೆಯು ಬತ್ತಿಹೋಯಿತು, ಹಸಿಹುಲ್ಲು ಬಾಡಿತು, ಮೇವು ತೀರಿತು ಅಲ್ಲಿ ಹಸಿರಾದದ್ದು ಇಲ್ಲ.</verse>
				<verse number="7">ಆದಕಾರಣ ತಾವು ಸಂಪಾದಿಸಿದ ಆಸ್ತಿಯನ್ನೂ, ಕೂಡಿಸಿಟ್ಟ ಸೊತ್ತನ್ನೂ ನೀರವಂಜಿಯ ಹೊಳೆಯ ಆಚೆಗೆ ಹೊತ್ತುಕೊಂಡು ಹೋಗುತ್ತಾರೆ.</verse>
				<verse number="8">ಅವರ ಕೂಗಾಟವು ಮೋವಾಬಿನ ಎಲೆಗಳ ತನಕ ಹಬ್ಬಿದೆ. ಅದರ ಕಿರಿಚಾಟ ಎಗ್ಲಯಿಮ್ ಹಾಗೂ ಬೆಯೆರ್ ಏಲೀಮ್ ಊರುಗಳ ತನಕ ವ್ಯಾಪಿಸಿದೆ.</verse>
				<verse number="9">ದೀಮೋನ್ ನದಿಯ ನೀರೆಲ್ಲಾ ರಕ್ತವಾಯಿತು. ದೀಮೋನಿನ ಮೇಲೆ ಹೆಚ್ಚಾದ ಹಾನಿಯನ್ನು ತರುವೆನು. ಮೋವಾಬ್ಯರಲ್ಲಿ ತಪ್ಪಿಸಿಕೊಂಡವರ ಮೇಲೆಯೂ, ದೇಶದಲ್ಲಿ ಉಳಿದವರ ಮೇಲೆಯೂ ಸಿಂಹವನ್ನು ಬರಮಾಡುವೆನು.</verse>
			</chapter>
			<chapter number="16">
				<verse number="1">ದೇಶವನ್ನು ಆಳುವವನಿಗೆ ಕಪ್ಪವಾಗಿ ಕೊಡತಕ್ಕ ಕುರಿಮರಿಯನ್ನು ಸೆಲ ಬಂಡೆಯಿಂದ ಮರುಭೂಮಿಯ ಕಡೆಗೆ, ಚೀಯೋನ್ ಪುತ್ರಿಯರ ಪರ್ವತಕ್ಕೆ ಕಳುಹಿಸಿರಿ.</verse>
				<verse number="2">ಗೂಡಿನಿಂದ ಹೊರಗೆ ಬಂದ ಹಕ್ಕಿಗಳ ಮರಿಗಳಂತೆ ಅಲೆದಾಡುವ ಹಾಗೆ, ಮೋವಾಬಿನ ಪುತ್ರಿಯರು ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಇರುವರು.</verse>
				<verse number="3">ಆಲೋಚಿಸಿ, ತೀರ್ಮಾನಿಸಿರಿ. ಮಟ್ಟ ಮಧ್ಯಾಹ್ನದಲ್ಲಿ ನಿಮ್ಮ ನೆರಳನ್ನು ರಾತ್ರಿಯಂತೆ ಮಾಡಿರಿ. ವಲಸಿಗರನ್ನು ಅಡಗಿಸಿರಿ. ಅಲೆಯುವವರನ್ನು ಬಯಲಿಗೆ ತರಬೇಡ.</verse>
				<verse number="4">ಮೋವಾಬ್ ದೇಶದಿಂದ ವಲಸೆಹೋದವರು ನಿಮ್ಮಲ್ಲಿ ವಾಸಿಸಲಿ. ವಿನಾಶಕರಿಗೆ ವಶವಾಗದಂತೆ ಅವರಿಗೆ ಆಶ್ರಯ ನೀಡಿರಿ. ದಬ್ಬಾಳಿಕೆ ಮುಗಿಯುತ್ತಾ ಬಂತು. ಸೂರೆಮಾಡುವುದು ನಿಲ್ಲುವುದು, ಪೀಡಿಸುವವರು ದೇಶದಿಂದ ಅಳಿದುಹೋಗುವರು.</verse>
				<verse number="5">ಪ್ರೀತಿಯಲ್ಲಿ ಸಿಂಹಾಸನವು ಸ್ಥಾಪಿತವಾಗುವುದು. ನ್ಯಾಯತೀರಿಸುವವನೂ, ನ್ಯಾಯವನ್ನು ಹುಡುಕುವವನೂ, ನೀತಿಗೋಸ್ಕರ ತ್ವರೆಪಡುವವನೂ, ದಾವೀದನ ಗುಡಾರದಲ್ಲಿ ಅದರ ಮೇಲೆ ನಂಬಿಗಸ್ತಿಕೆಯಲ್ಲಿ ಕೂತುಕೊಳ್ಳುವನು.</verse>
				<verse number="6">ಮೋವಾಬಿನ ಗರ್ವವನ್ನು ನಾವು ಕೇಳಿದ್ದೇವೆ. ಆಕೆಗೆ ಬಹಳ ಗರ್ವ. ಆಕೆಯ ಅಹಂಕಾರವು, ಆಕೆಯ ಗರ್ವವು ಮತ್ತು ಆಕೆಗೆ ಕೋಪವು ಸಹ ಉಂಟು. ಆದರೆ ಆಕೆಯ ಕೊಚ್ಚಿಕೊಳ್ಳುವಿಕೆ ಬರಿದಾದದ್ದು.</verse>
				<verse number="7">ಆದ್ದರಿಂದ ಮೋವಾಬಿನ ನಿಮಿತ್ತ ಮೋವಾಬ್ಯರು ಗೋಳಾಡುವರು, ಒಟ್ಟಾಗಿ ಗೋಳಾಡುವರು. ಏಕೆಂದರೆ ಕೀರ್ ಹರೆಷೆಥಿನ ದ್ರಾಕ್ಷಿಯ ಕಡುಬುಗಳಿಗೋಸ್ಕರ ನೀವು ದುಃಖಿಸುವಿರಿ. ನಿಜವಾಗಿಯೂ ಅವರು ನೊಂದು ಹೋಗಿದ್ದಾರೆ.</verse>
				<verse number="8">ಹೆಷ್ಬೋನ್ ಊರಿನ ಹೊಲ ಮತ್ತು ಸಿಬ್ಮ ಊರಿನ ದ್ರಾಕ್ಷಿ ಸಹ ನಿಸ್ಸಾರವಾಗಿವೆ. ಇತರ ಜನರ ಪ್ರಭುಗಳು ವಿಶಾಲವಾದ ದ್ರಾಕ್ಷಿಗಿಡಗಳನ್ನು ತುಳಿದು ಹಾಕಿದ್ದಾರೆ, ಆ ದ್ರಾಕ್ಷಿಗಿಡಗಳು ಯಜ್ಜೇರ್ ಊರಿನವರೆಗೂ ವ್ಯಾಪಿಸಿ, ಮರುಭೂಮಿಯಲ್ಲಿ ಹರಡಿತ್ತು. ಅದರ ಕೊಂಬೆಗಳು ಹಬ್ಬಿ, ಸಮುದ್ರದವರೆಗೆ ವಿಶಾಲವಾಗಿತ್ತು.</verse>
				<verse number="9">ಆದಕಾರಣ ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ ಯಜ್ಜೇರ್ ಪಟ್ಟಣದೊಂದಿಗೆ ಅಳುವೆನು. ಓ ಹೆಷ್ಬೋನ್ ಮತ್ತು ಎಲೆಯಾಲೆ ಪಟ್ಟಣಗಳೇ, ನಿಮ್ಮನ್ನು ನನ್ನ ಕಣ್ಣೀರಿನಿಂದ ತೋಯಿಸುವೆನು! ಏಕೆಂದರೆ ಶತ್ರುಗಳು ಬಿದ್ದುಹೋದ ನಿಮ್ಮ ಬೇಸಿಗೆಯ ಫಲಗಳಿಗೂ, ಬೆಳೆಗಳಿಗೂ ಆರ್ಭಟಿಸುತ್ತಾರೆ.</verse>
				<verse number="10">ಸಮೃದ್ಧಿಯಾದ ಹೊಲಗಳಿಂದ ಸಂತೋಷವು ಮತ್ತು ಆನಂದವು ತೊಲಗಿವೆ. ದ್ರಾಕ್ಷಿತೋಟಗಳಲ್ಲಿ ಕೀರ್ತನೆಗಳಾಗಲೀ, ಆರ್ಭಟವಾಗಲೀ ಇರುವದಿಲ್ಲ. ದ್ರಾಕ್ಷಿ ತೊಟ್ಟಿಗಳಲ್ಲಿ ಇನ್ನು ದ್ರಾಕ್ಷಾರಸವನ್ನು ತುಳಿದು ತೆಗೆಯುವುದಿಲ್ಲ. ಅವರ ಕೂಗಾಟವನ್ನು ನಿಲ್ಲಿಸಿಬಿಟ್ಟಿದ್ದೇನೆ.</verse>
				<verse number="11">ಆದ್ದರಿಂದ ಮೋವಾಬಿನ ನಿಮಿತ್ತ ನನ್ನ ಹೃದಯವೂ, ಕೀರ್ ಹೆರೆಸೆಥ್ ನಿಮಿತ್ತ ನನ್ನ ಅಂತರಂಗವೂ ಕಿನ್ನರಿಯಂತೆ ಮಿಡಿಯುತ್ತಾ ದುಃಖಿಸುತ್ತಿದೆ.</verse>
				<verse number="12">ಹೀಗಿರುವಲ್ಲಿ ಮೋವಾಬು ಉನ್ನತ ಸ್ಥಳದಲ್ಲಿ ಆಯಾಸಗೊಂಡಂತೆ ಕಾಣಿಸಿಕೊಂಡು, ಅವಳ ದೇವಾಲಯಕ್ಕೆ ಪ್ರಾರ್ಥಿಸುವುದಕ್ಕೆ ಬಂದರೂ ಅದಕ್ಕೆ ಸಫಲವಾಗದು.</verse>
				<verse number="13">ಯೆಹೋವ ದೇವರು ಮೋವಾಬಿನ ವಿಷಯವಾಗಿ ಹಿಂದೆ ನುಡಿದ ಮಾತು ಇದೇ:</verse>
				<verse number="14">ಆದರೆ ಈಗ ಯೆಹೋವ ದೇವರು ಮಾತನಾಡಿ, “ಗುಲಾಮಗಿರಿಯ ಕಟ್ಟುನಿಟ್ಟಿನ ಲೆಕ್ಕಾಚಾರದಂತೆ, ಮೂರು ವರುಷದೊಳಗೆ ಮೋವಾಬಿನ ವೈಭವವು ಹೀನಾಯಕ್ಕೆ ಈಡಾಗುವುದು. ಅಲ್ಲಿನವರ ದೊಡ್ಡ ಜನಸಂಖ್ಯೆಯಲ್ಲಿ ಅಳಿದುಉಳಿಯುವವರು ಬಲಹೀನರಾದ ಕೆಲವು ಜನರಾಗಿರುವರು,” ಎಂದು ಹೇಳಿದ್ದಾರೆ.</verse>
			</chapter>
			<chapter number="17">
				<verse number="1">ದಮಸ್ಕದ ವಿಷಯವಾದ ಪ್ರವಾದನೆ: ಇಗೋ, ದಮಸ್ಕವು ಇನ್ನು ಪಟ್ಟಣವಾಗಿರದೆ ಅದು ಹಾಳು ದಿಬ್ಬವಾಗಿರುವುದು.</verse>
				<verse number="2">ಅರೋಯೇರ್ ಪ್ರಾಂತದ ಪಟ್ಟಣಗಳು ನಿರ್ಜನವಾಗಿ, ಅವು ಯಾರ ಹೆದರಿಕೆಯೂ ಇಲ್ಲದೆ ಮಲಗುವ ಮಂದೆಗಳಿಗೆ ಸ್ಥಳವಾಗುವುವು.</verse>
				<verse number="3">ಎಫ್ರಾಯೀಮಿನಿಂದ ಕೋಟೆಯೂ, ದಮಸ್ಕದ ರಾಜ್ಯಾಧಿಕಾರವೂ, ಅರಾಮ್ಯರಲ್ಲಿ ಉಳಿದವುಗಳೂ ಸಹ ಇಲ್ಲವಾಗಿ ಹೋಗುವುವು. ಅವರು ಇಸ್ರಾಯೇಲಿನ ಮಕ್ಕಳ ವೈಭವದಂತೆ ಇರುವರು ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.</verse>
				<verse number="4">ಆ ದಿವಸದಲ್ಲಿ ಯಾಕೋಬ್ಯರ ವೈಭವ ತಗ್ಗುವುದು. ಅವರ ಕೊಬ್ಬು ಕರಗುವುದು.</verse>
				<verse number="5">ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ, ರೆಫಾಯಿಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವುದು.</verse>
				<verse number="6">ಆದರೂ ಎಣ್ಣೆಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿಯಲ್ಲಿ ಎರಡು ಮೂರು ಕಾಯಿಗಳಿರುವುವು. ಅದರ ಫಲವತ್ತಾದ ಆ ಮರದ ರೆಂಬೆಗಳಲ್ಲಿ ನಾಲ್ಕೈದು ಕಾಯಿಗಳು ಉಳಿದಿರುವುವು. ಅದೇ ರೀತಿಯಾಗಿ, ಇಸ್ರಾಯೇಲರಲ್ಲಿ ಕೆಲವರು ಮಾತ್ರ ಉಳಿದಿರುವರು, ಎಂದು ಇಸ್ರಾಯೇಲಿನ ಯೆಹೋವ ದೇವರು ಹೇಳುತ್ತಾರೆ.</verse>
				<verse number="7">ಆ ದಿನದಲ್ಲಿ ಜನರು ತಮ್ಮನ್ನು ಉಂಟುಮಾಡಿದವರ ಮೇಲೆ ದೃಷ್ಟಿಯಿಡುವರು ಮತ್ತು ಇಸ್ರಾಯೇಲಿನ ಪರಿಶುದ್ಧರ ಕಡೆಗೆ ತಿರುಗಿಕೊಳ್ಳುವರು.</verse>
				<verse number="8">ಅವರು ತಮ್ಮ ಕೈಕೆಲಸವಾದ ಬಲಿಪೀಠಗಳನ್ನು ದೃಷ್ಟಿಸುವರು. ಬೆರಳುಗಳು ಮಾಡಿದ ಧೂಪಪೀಠಗಳನ್ನು, ಅಶೇರ ಸ್ತಂಭಗಳನ್ನು ಗೌರವಿಸುವುದಿಲ್ಲ.</verse>
				<verse number="9">ಆ ದಿನದಲ್ಲಿ ಅವರು ಇಸ್ರಾಯೇಲರ ನಿಮಿತ್ತವಾಗಿ ಬಲವಾದ ಪಟ್ಟಣಗಳು ದಟ್ಟಡವಿಯ ಹಾಗಿದ್ದು ಹಾಳುಬೀಳುವುದು. ಅಂತು ದೇಶವೆಲ್ಲಾ ಹಾಳಾಗಿರುವದು.</verse>
				<verse number="10">ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು, ನಿನ್ನ ಬಂಡೆಯೂ, ಕೋಟೆಯೂ ಆಗಿರುವವರನ್ನು ಮರೆತು ಬಿಟ್ಟಿದ್ದೀ. ನೀನು ರಮ್ಯವಾದ ಗಿಡಗಳನ್ನು ಮತ್ತು ದೇಶಾಂತರದ ದ್ರಾಕ್ಷಿಯ ಸಸಿಗಳನ್ನು ಹಾಕಿದ್ದರೂ,</verse>
				<verse number="11">ಬೆಳೆಸಲು ಸಸಿಯನ್ನು ಹಾಕಿದ ದಿನದಲ್ಲಿ ಬೇಲಿಹಾಕಿ ಮತ್ತು ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆಯುವಂತೆ ಮಾಡಿದರೂ, ರೋಗದ ಹಾಗೂ ಗುಣಪಡಿಸಲಾರದ ಬೇನೆಯ ದಿನದಲ್ಲಿ ನಿನ್ನ ಸುಗ್ಗಿ ಏನೂ ಇರುವುದಿಲ್ಲ.</verse>
				<verse number="12">ಆಹಾ, ಸಮುದ್ರವು ಭೋರ್ಗರೆಯುವಂತೆ ಭೋರ್ಗರೆಯುವ ಬಹು ಜನಾಂಗಗಳ ಗದ್ದಲ! ಮಹಾ ಜಲಪ್ರವಾಹಗಳು ಘೋಷಿಸುವಂತೆ ಘೋಷಿಸುವ ಜನಗಳ ಘೋಷ!</verse>
				<verse number="13">ಪ್ರಚಂಡ ಜಲಪ್ರವಾಹಗಳು ಘೋಷಿಸುವಂತೆ ಜನಾಂಗಗಳು ಘೋಷಿಸುತ್ತವೆ. ಆದರೆ ದೇವರು ಅವರನ್ನು ಗದರಿಸುತ್ತಲೇ, ಅವರು ದೂರಹೋಗಿ ಬೆಟ್ಟಗಳಲ್ಲಿ ಗಾಳಿಗೆ ಸಿಕ್ಕಿದ ಹೊಟ್ಟಿನಂತೆಯೂ, ಸುಂಟರಗಾಳಿಯಿಂದ ಸುತ್ತಿ ಆಡುವ ಧೂಳಿನಂತೆಯೂ ಓಡಿಹೋಗುವರು.</verse>
				<verse number="14">ಸಾಯಂಕಾಲದಲ್ಲಿ ಭಯಭ್ರಾಂತಿ, ಉದಯಕ್ಕೆ ಮುಂಚೆ ಅವು ಇಲ್ಲದಂತಾಗುವುದು. ನಮ್ಮನ್ನು ಸೂರೆ ಮಾಡುವವರಿಗೆ ಇದೇ ಗತಿ. ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು ಇದೇ.</verse>
			</chapter>
			<chapter number="18">
				<verse number="1">ಕೂಷ್ ನದಿಯ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡಿಗೆ ಕಷ್ಟ!</verse>
				<verse number="2">ಇದು ಆಪಿನ ದೋಣಿಗಳಲ್ಲಿ ಸಮುದ್ರ ಮಾರ್ಗದಿಂದ ರಾಯಭಾರಿಗಳನ್ನು ನೀರಿನ ಮೇಲೆ ಕಳುಹಿಸುತ್ತದೆ. ಶೀಘ್ರವಾಗಿ ಬರುತ್ತಿರುವ ದೂತರೇ, ಎತ್ತರವಾದವರೂ, ನುಣುಪಾದ ಚರ್ಮವುಳ್ಳ ಜನರ ಬಳಿಗೂ, ಸರ್ವರಿಗೂ ಭಯಪ್ರಧರಾಗಿರುವ ಜನರ ಬಳಿಗೂ, ವಿಚಿತ್ರ ಭಾಷೆಯಿರುವ ಹಾಗೂ ನದಿಗಳಿಂದ ವಿಂಗಡವಾಗಿರುವ ಆಕ್ರಮಣಕಾರಿ ರಾಷ್ಟ್ರದವರ ಬಳಿಗೂ ಹೋಗಿರಿ.</verse>
				<verse number="3">ಜಗದ ಸಕಲ ನಿವಾಸಿಗಳೇ! ಭೂಮಿಯಲ್ಲಿ ವಾಸಿಸುವವರೇ! ಬೆಟ್ಟಗಳ ಮೇಲೆ ಧ್ವಜವನ್ನು ಎತ್ತುವಾಗ ಅದನ್ನು ನೀವು ನೋಡುವಿರಿ, ತುತೂರಿಯನ್ನು ಊದುವಾಗ ಕೇಳಿಸಿಕೊಳ್ಳುವಿರಿ.</verse>
				<verse number="4">ಯೆಹೋವ ದೇವರು ನನಗೆ ಹೀಗೆ ಹೇಳಿದರು, “ನಾನು ನನ್ನ ವಿಶ್ರಾಂತಿಯನ್ನು ತೆಗೆದುಕೊಳ್ಳುವೆನು. ಬಿಸಿಹಗಲಿನ ಸೂರ್ಯನಂತೆಯೂ ಸುಗ್ಗಿಯಲ್ಲಿನ ಮಂಜಿನ ಮೋಡದಂತೆಯೂ ನಾನು ನನ್ನ ನಿವಾಸಸ್ಥಾನದಲ್ಲಿ ಸುಮ್ಮನೆ ನೋಡುತ್ತಿರುವೆನು.”</verse>
				<verse number="5">ಏಕೆಂದರೆ ಸುಗ್ಗಿಗೆ ಮುಂಚೆ ಮೊಗ್ಗು ಬಿಟ್ಟಾದ ಮೇಲೆ ಹೂವಿನಲ್ಲಿ ದ್ರಾಕ್ಷಿ ಕಾಯಿಯಾಗುವಾಗ ಅವರು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ, ಚಿಗುರುಗಳನ್ನು ಕಡಿದುಹಾಕುವರು.</verse>
				<verse number="6">ಅವುಗಳೆಲ್ಲ ಬೆಟ್ಟದ ಹದ್ದುಗಳಿಗೂ, ಭೂಮಿಯ ಮೃಗಗಳಿಗೂ ಆಹಾರವಾಗುವುವು. ಅದು ಪಕ್ಷಿಗಳಿಗೆ ಬೇಸಿಗೆ ಕಾಲದಲ್ಲಿಯೂ, ಕಾಡುಮೃಗಗಳಿಗೆ ಚಳಿಗಾಲದಲ್ಲಿಯೂ ಆಹಾರವಾಗುವುದು.</verse>
				<verse number="7">ಆಗ ಎತ್ತರವಾದ ಹಾಗೂ ನುಣುಪು ಚರ್ಮವುಳ್ಳ ಜನರಿಂದಲೂ, ಸರ್ವರಿಗೂ ಭಯಪ್ರಧರಾದ ಜನರಿಂದಲೂ, ವಿಚಿತ್ರ ಭಾಷೆಯಿಂದ ಹಾಗೂ ನದಿಗಳಿಂದ ವಿಂಗಡವಾಗಿರುವ ಆಕ್ರಮಣಕಾರಿ ಜನರಿಂದಲೂ ಸರ್ವಶಕ್ತರಾದ ಯೆಹೋವ ದೇವರಿಗೆ ಕಾಣಿಕೆಗಳು ತರಲಾಗುವುದು. ಹೌದು, ಸೇನಾಧೀಶ್ವರ ಯೆಹೋವ ದೇವರ ಹೆಸರುಳ್ಳ ಚೀಯೋನ್ ಪರ್ವತಕ್ಕೆ ಕಾಣಿಕೆಗಳು ತರಲಾಗುವುದು.</verse>
			</chapter>
			<chapter number="19">
				<verse number="1">ಈಜಿಪ್ಟಿನವರ ವಿಷಯವಾದ ಪ್ರವಾದನೆ: ಇಗೋ, ಯೆಹೋವ ದೇವರು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಈಜಿಪ್ಟಿಗೆ ಬರುತ್ತಾರೆ. ಅವರು ಸಮ್ಮುಖರಾದಾಗ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯಗಳು ಅದರ ಮಧ್ಯೆ ಭಯದಿಂದ ಕರಗುವುವು.</verse>
				<verse number="2">ಇದಲ್ಲದೆ ನಾನು ಈಜಿಪ್ಟಿನವನಿಗೆ ವಿರೋಧವಾಗಿ ಈಜಿಪ್ಟಿನವನನ್ನು ಎಬ್ಬಿಸುವೆನು. ಸಹೋದರನಿಗೆ ವಿರುದ್ಧವಾಗಿ ಸಹೋದರನೂ, ನೆರೆಯವನಿಗೆ ವಿರುದ್ಧವಾಗಿ ನೆರೆಯವನೂ, ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೊರಾಡುವವು.</verse>
				<verse number="3">ಈಜಿಪ್ಟಿನವರ ಮನಸ್ಸು ಭಯಗೊಳ್ಳುವುದು ಅವರ ಆಲೋಚನೆಯನ್ನು ಭಂಗಪಡಿಸುವೆನು. ಅಲ್ಲಿಯವರು ವಿಗ್ರಹಗಳನ್ನೂ, ಮಾಟಗಾರರನ್ನೂ, ಯಕ್ಷಣಿಗಾರರನ್ನೂ, ಮಂತ್ರವಾದಿಗಳನ್ನೂ ಆಶ್ರಯಿಸುವರು.</verse>
				<verse number="4">ಈಜಿಪ್ಟಿನವರನ್ನು ಕ್ರೂರನಾದ ಒಡೆಯನ ಕೈಗೆ ಒಪ್ಪಿಸುವೆನು. ಭಯಂಕರನಾದ ರಾಜನು ಅವರನ್ನಾಳುವನು, ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.</verse>
				<verse number="5">ನೈಲ್ ನದಿಯ ನೀರು ಬತ್ತಿಹೋಗುವುದು. ನದಿ ತೀರವೂ ಇಂಗಿ ಒಣಗಿಹೋಗುವುದು.</verse>
				<verse number="6">ಕಾಲುವೆಗಳು ನಾರುವುವು. ಈಜಿಪ್ಟನ ಉಪನದಿಗಳು ದೂರಕ್ಕೆ ಇಳಿದು ನೀರಿಲ್ಲದೆ ಹೋಗುವುವು. ಜಂಬು ಹುಲ್ಲು ಬಾಡುವುದು.</verse>
				<verse number="7">ನೈಲ್ ನದಿಯ ಹತ್ತಿರದ ತೀರವು ಬರುಡಾಗುವುದು. ನದಿಯ ಬಳಿಯಲ್ಲಿ ಬಿತ್ತಿದ ಬೀಜಗಳೆಲ್ಲವೂ ಒಣಗಿ, ಗಾಳಿಗೆ ತೂರಿಹೋಗುವುವು.</verse>
				<verse number="8">ಮೀನುಗಾರರು ಕೂಡ ದುಃಖಿಸುವರು ಮತ್ತು ನೈಲ್ ನದಿಯಲ್ಲಿ ಗಾಳ ಹಾಕುವವರು ಪ್ರಲಾಪಿಸುವರು. ನೀರಿನ ಮೇಲೆ ಬಲೆ ಬೀಸುವವರು ಕುಗ್ಗಿ ಹೋಗುವರು.</verse>
				<verse number="9">ನಯವಾದ ನಾರಿನ ಕೆಲಸದವರು ಬಟ್ಟೆ ನೇಯುವವರು ನಿರಾಶರಾಗಿರುವರು.</verse>
				<verse number="10">ಬಟ್ಟೆಯಲ್ಲಿ ಕೆಲಸ ಮಾಡುವವರು ಖಿನ್ನರಾಗುತ್ತಾರೆ, ಮತ್ತು ಎಲ್ಲಾ ವೇತನದಾರರು ಹೃದಯದಲ್ಲಿ ಅನಾರೋಗ್ಯಕ್ಕೆ ಒಳಗಾಗುತ್ತಾರೆ.</verse>
				<verse number="11">ಚೋವನ್ ಪಟ್ಟಣದ ಅಧಿಪತಿಗಳು ಕೇವಲ ಬುದ್ಧಿಹೀನರು; ಫರೋಹನ ಮಂತ್ರಿಗಳಲ್ಲಿ ಜ್ಞಾನವುಳ್ಳ ಸಲಹೆಗಾರರ ಆಲೋಚನೆಯೂ ಜ್ಞಾನರಹಿತವಾಗಿದೆ. ನೀವು ಫರೋಹನನಿಗೆ, “ನಾನು ಜ್ಞಾನಿಗಳ ಸಂತಾನದವನು, ಪುರಾತನ ರಾಜನ ಶಿಷ್ಯನೆಂದು ಹೇಳುವುದು ಹೇಗೆ”?</verse>
				<verse number="12">ನಿನ್ನ ಜ್ಞಾನಿಗಳು ಎಲ್ಲಿ? ನಿನಗೆ ಅವರು ಹೇಳಲಿ. ಸೇನಾಧೀಶ್ವರ ಯೆಹೋವ ದೇವರು ಈಜಿಪ್ಟಿನವರ ವಿರೋಧವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದುಕೊಳ್ಳಲಿ.</verse>
				<verse number="13">ಚೋವನಿನ ಶ್ರೇಷ್ಠರು ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಈಜಿಪ್ಟಿನ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿದ್ದಾರೆ. ಅದನ್ನು ತಪ್ಪು ದಾರಿಗೆಳೆದಿದ್ದಾರೆ.</verse>
				<verse number="14">ಯೆಹೋವ ದೇವರು ಅವರ ಮಧ್ಯದಲ್ಲಿ ತತ್ತರಿಸುವ ಆತ್ಮವನ್ನು ಸುರಿಸಿದ್ದಾರೆ. ಅಮಲೇರಿದವನು ಕಕ್ಕುತ್ತಾ ಓಲಾಡುವ ಪ್ರಕಾರ ಈಜಿಪ್ಟ್ ತನ್ನ ಒಂದೊಂದು ಕೆಲಸದಲ್ಲಿಯೂ ಓಲಾಡುವಂತೆ ಮಾಡಿದ್ದಾರೆ.</verse>
				<verse number="15">ಈಜಿಪ್ಟಿನಲ್ಲಿ ತಲೆಯಾಗಲಿ, ಬಾಲವಾಗಲಿ, ಕೊಂಬೆಯಾಗಲಿ, ಒಂದು ಕಡ್ಡಿಯಾಗಲಿ ಸಾಧಿಸಲು ಸಾಧ್ಯವಾಗದ ಯಾವ ಕೆಲಸವೂ ಇರುವುದಿಲ್ಲ.</verse>
				<verse number="16">ಆ ದಿನದಲ್ಲಿ ಈಜಿಪ್ಟಿನವರು ಹೆಂಗಸರ ಹಾಗೆ ಇರುವರು. ಸೇನಾಧೀಶ್ವರ ಯೆಹೋವ ದೇವರು ಅದರ ಮೇಲೆ ಎತ್ತಿದ ಕೈಯನ್ನು ಬೀಸುತ್ತಿರುವುದರಿಂದ ಅವರು ಹೆದರಿ ಭಯಪಡುವರು.</verse>
				<verse number="17">ಈಜಿಪ್ಟ್ ಬೆಚ್ಚಿ ಬೀಳುವುದಕ್ಕೆ ಯೆಹೂದ ದೇಶವು ಕಾರಣವಾಗುವುದು, ಈ ದೇಶದ ಹೆಸರನ್ನು ಕೇಳುವ ಪ್ರತಿಯೊಬ್ಬನು ಸೇನಾಧೀಶ್ವರ ಯೆಹೋವ ದೇವರು ಈಜಿಪ್ಟಿಗೆ ಪ್ರತಿಕೂಲವಾಗಿ ಮಾಡಿಕೊಂಡಿರುವ ಆಲೋಚನೆಯನ್ನು ತಿಳಿದು ಬೆರಗಾಗುವನು.</verse>
				<verse number="18">ಆ ದಿವಸದಲ್ಲಿ ಈಜಿಪ್ಟಿನ ಐದು ಪಟ್ಟಣಗಳು ಸೇನಾಧೀಶ್ವರ ಯೆಹೋವ ದೇವರಿಗೆ ಆಣೆಯಿಟ್ಟುಕೊಳ್ಳುವವು. ಕಾನಾನಿನ ಭಾಷೆಯನ್ನಾಡುವವರಿಂದ ತುಂಬಿದ ಐದು ಪಟ್ಟಣಗಳು ಈಜಿಪ್ಟ್ ದೇಶದಲ್ಲಿರುವುವು. ಅವುಗಳಲ್ಲಿ ಒಂದರ ಹೆಸರು “ನಾಶಪುರ.”</verse>
				<verse number="19">ಆ ದಿನದಲ್ಲಿ ಈಜಿಪ್ಟ್ ದೇಶದ ಮಧ್ಯದಲ್ಲಿ ಯೆಹೋವ ದೇವರಿಗೆ ಬಲಿಪೀಠವು ದೇಶದ ಎಲ್ಲೆಯಲ್ಲಿ ಯೆಹೋವ ದೇವರಿಗೆ ಒಂದು ಸ್ತಂಭವು ಇರುವುದು.</verse>
				<verse number="20">ಅದು ಸೇನಾಧೀಶ್ವರ ಯೆಹೋವ ದೇವರಿಗೆ ಈಜಿಪ್ಟ್ ದೇಶದಲ್ಲಿ ಗುರುತಾಗಿ ಸಾಕ್ಷಿಯಾಗಿರುವುದು. ಏಕೆಂದರೆ ಹಿಂಸಕರ ದೆಸೆಯಿಂದ ಯೆಹೋವ ದೇವರನ್ನು ಕೂಗಿಕೊಳ್ಳಲು, ದೇವರು ಅವರಿಗೆ ಒಬ್ಬ ಶೂರನಾದ ರಕ್ಷಕನನ್ನು ಕಳುಹಿಸಿ, ಅವರನ್ನು ಬಿಡುಗಡೆ ಮಾಡುವರು.</verse>
				<verse number="21">ಯೆಹೋವ ದೇವರು ತಮ್ಮನ್ನು ಈಜಿಪ್ಟಿನವರಿಗೆ ತಿಳಿಯಪಡಿಸಲು, ಅವರು ಆ ದಿನದಲ್ಲಿ ಯೆಹೋವ ದೇವರನ್ನು ತಿಳಿದುಕೊಳ್ಳುವರು ಮತ್ತು ಬಲಿಕಾಣಿಕೆಗಳಿಂದ ಸೇವೆಮಾಡುವರು. ಹೌದು, ಅವರು ಯೆಹೋವ ದೇವರಿಗೆ ಪ್ರಮಾಣ ಮಾಡಿಕೊಂಡು ನೆರವೇರಿಸುವರು.</verse>
				<verse number="22">ಇದಲ್ಲದೆ ಯೆಹೋವ ದೇವರು ಈಜಿಪ್ಟಿನವರನ್ನು ಹೊಡೆಯುವರು; ಗಾಯಮಾಡಿ ಸ್ವಸ್ಥ ಮಾಡುವರು. ಅವರು ಯೆಹೋವ ದೇವರ ಕಡೆಗೆ ತಿರುಗಿಕೊಳ್ಳುವರು, ದೇವರು ಅವರನ್ನು ಆಲೈಸಿ ಸ್ವಸ್ಥ ಮಾಡುವರು.</verse>
				<verse number="23">ಆ ದಿವಸದಲ್ಲಿ ಈಜಿಪ್ಟಿನಿಂದ ಅಸ್ಸೀರಿಯಕ್ಕೆ ಹೋಗುವ ಒಂದು ರಾಜ ಮಾರ್ಗವಿರುವುದು. ಅಸ್ಸೀರಿಯದವರು ಈಜಿಪ್ಟಿಗೂ, ಈಜಿಪ್ಟಿನವರು ಅಸ್ಸೀರಿಯಕ್ಕೂ ಹೋಗಿ ಬರುವರು. ಈಜಿಪ್ಟಿನವರು, ಅಸ್ಸೀರಿಯರೊಂದಿಗೆ ಯೆಹೋವ ದೇವರನ್ನು ಆರಾಧಿಸುವರು.</verse>
				<verse number="24">ಆ ದಿನದಲ್ಲಿ ಇಸ್ರಾಯೇಲು ಈಜಿಪ್ಟಿನವರ ಮತ್ತು ಅಸ್ಸೀರಿಯದವರ ಸಂಗಡ ಮೂರನೆಯದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವುದು.</verse>
				<verse number="25">ನನ್ನ ಪ್ರಜೆಯಾದ ಈಜಿಪ್ಟಿಗೂ, ನನ್ನ ಕೈಕೆಲಸವಾದ ಅಸ್ಸೀರಿಯಕ್ಕೂ ಮತ್ತು ನನ್ನ ಸೊತ್ತಾದ ಇಸ್ರಾಯೇಲಿಗೂ, “ನಿಮಗೆ ಆಶೀರ್ವಾದ,” ಎಂದು ಸೇನಾಧೀಶ್ವರ ಯೆಹೋವ ದೇವರು ಅವುಗಳನ್ನು ಆಶೀರ್ವಾದ ಮಾಡುವರು.</verse>
			</chapter>
			<chapter number="20">
				<verse number="1">ಅಸ್ಸೀರಿಯದ ಅರಸನಾದ ಸರ್ಗೋನನು ಕಳುಹಿಸಿದ ವರ್ಷದಲ್ಲಿ ಪ್ರಮುಖ ಸೇನಾಪತಿ, ಅಷ್ಡೋದಿಗೆ ಬಂದು ಅದನ್ನು ಮುತ್ತಿಗೆ ಹಾಕಿ ಆಕ್ರಮಿಸಿಕೊಂಡನು.</verse>
				<verse number="2">ಅದೇ ಸಮಯದಲ್ಲಿ ಯೆಹೋವ ದೇವರು ಆಮೋಚನ ಮಗ ಯೆಶಾಯನಿಗೆ, “ನಿನ್ನ ಸೊಂಟಕ್ಕೆ ಕಟ್ಟಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಕೆರಗಳನ್ನು ತೆಗೆದಿಡು,” ಎಂದು ಹೇಳಿದರು. ಅವನು ಹಾಗೆ ಮಾಡಿ, ಬೆತ್ತಲೆಯಾಗಿ ಬರಿಗಾಲಿನಲ್ಲೇ ತಿರುಗಾಡುತ್ತಿದ್ದನು.</verse>
				<verse number="3">ಆಗ ಯೆಹೋವ ದೇವರು, “ನನ್ನ ಸೇವಕನಾದ ಯೆಶಾಯನು ಈಜಿಪ್ಟ್ ಮತ್ತು ಕೂಷಿಗು, ಗುರುತಾಗಿಯೂ, ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು.</verse>
				<verse number="4">ಹಾಗೆಯೇ ಅಸ್ಸೀರಿಯದ ಅರಸನು ಈಜಿಪ್ಟಿನವರನ್ನು ಬಂಧಿಸಿ, ಕೂಷಿನ ಕೈದಿಗಳನ್ನು ಅವರು ದೊಡ್ಡವರಾಗಲೀ, ಸಣ್ಣವರಾಗಲೀ ಬಟ್ಟೆ, ಕೆರಗಳಿಲ್ಲದೆ ಈಜಿಪ್ಟಿನ ಮಾನಭಂಗಕ್ಕೋಸ್ಕರ ಸೆರೆಗೆ ನಡೆಯುವಂತೆ ಮಾಡುವನು.</verse>
				<verse number="5">ಆಗ ನನ್ನ ಜನರು ಅವನು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಳ್ಳುತ್ತಿದ್ದ ಈಜಿಪ್ಟಿನ ವಿಷಯವಾಗಿಯೂ, ನಿರಾಶರಾಗಿ ನಾಚಿಕೆಪಡುವರು.</verse>
				<verse number="6">ಆ ದಿನದಲ್ಲಿ ಕರಾವಳಿಯ ನಿವಾಸಿಗಳು, ‘ಇಗೋ, ಅಸ್ಸೀರಿಯದ ಅರಸರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ, ನಿರೀಕ್ಷಿಸಿದ್ದೆವೋ ಅವರಿಗೆ ಈ ಗತಿ ಬಂತಲ್ಲಾ ಮತ್ತು ನಾವು ತಪ್ಪಿಸಿಕೊಳ್ಳುವುದು ಹೇಗೆ?’ ಎಂದುಕೊಳ್ಳುವರು.”</verse>
			</chapter>
			<chapter number="21">
				<verse number="1">ಸಮುದ್ರತೀರದ ಮರುಭೂಮಿಯ ವಿಷಯವಾದ ಪ್ರವಾದನೆ: ದಕ್ಷಿಣ ಸೀಮೆಯಲ್ಲಿ ಬೀಸುವ ಬಿರುಗಾಳಿ ದಾಟಿ ಹೋಗುವಂತೆ ಆಕ್ರಮಣಕಾರರು ಮರುಭೂಮಿ ಕಡೆಯಿಂದ ಭಯಂಕರವಾದ ದೇಶದಿಂದ ಬರುತ್ತಾರೆ.</verse>
				<verse number="2">ಘೋರ ದರ್ಶನವು ನನಗೆ ತಿಳಿಯಬಂದಿದೆ: ಬಾಧಕನು ಬಾಧಿಸುತ್ತಿದ್ದಾನೆ. ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ ಮುತ್ತಿಗೆ ಹಾಕು, ಅದರ ನಿಟ್ಟುಸಿರನ್ನೆಲ್ಲಾ ನಿಲ್ಲಿಸಿಬಿಟ್ಟಿದ್ದೇನೆ.</verse>
				<verse number="3">ಆದ್ದರಿಂದ ನನ್ನ ಸೊಂಟಗಳು ನೋವಿನಿಂದ ತುಂಬಿವೆ. ಹೆರುವವಳ ವೇದನೆಗಳಂತಿರುವ ವೇದನೆಗಳು ನನ್ನನ್ನು ಹಿಡಿದಿವೆ. ಕಿವಿ ಕಿವುಡಾಗುವಷ್ಟು ಸಂಕಟಪಡುತ್ತೇನೆ. ಕಣ್ಣು ಕುರುಡಾಗುವಷ್ಟು ಭ್ರಾಂತನಾಗಿದ್ದೇನೆ.</verse>
				<verse number="4">ನನ್ನ ಹೃದಯವು ಬಡಿದುಕೊಳ್ಳುತ್ತಿದೆ, ಗಾಬರಿಗೊಂಡಿದೆ. ನಡುಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನಾ ಬಯಸಿದ ಸಂಜೆಯೇ ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.</verse>
				<verse number="5">ಔತಣ ಸಿದ್ಧವಾಗಿದೆ. ಬುರುಜಿನ ಮೇಲೆ ಕಾವಲಿರು. ಉಣ್ಣು, ಕುಡಿ, ಪ್ರಭುಗಳೇ, ಏಳಿರಿ, ಗುರಾಣಿಗೆ ಎಣ್ಣೆಯನ್ನು ಹಚ್ಚಿರಿ.</verse>
				<verse number="6">ಕರ್ತರು ನನಗೆ ಹೇಳಿದ್ದೇನೆಂದರೆ, “ಹೋಗು, ಕಾವಲುಗಾರರನ್ನು ನೇಮಿಸು. ಅವನು ಕಂಡದ್ದನ್ನು ತಿಳಿಸಲಿ.</verse>
				<verse number="7">ಅವನು ಜೋಡಿ ಜೋಡಿಯಾಗಿ ಬರುವ ರಥ ಸವಾರರ ಸಾಲನ್ನು ಕತ್ತೆಗಳ, ಒಂಟೆಗಳ, ರಥ ಸಾಲುಗಳನ್ನು ನೋಡಿದರೆ, ಬಹು ಗಮನದಿಂದ ಕಿವಿಗೊಟ್ಟು ಗಮನಿಸಲಿ.”</verse>
				<verse number="8">ಬಳಿಕ ಅವನು ಸಿಂಹದಂತೆ ಕೂಗಿ ಹೀಗೆ ಹೇಳಿದನು, “ನನ್ನ ಒಡೆಯನೇ, ನಾನು ಹಗಲೆಲ್ಲಾ ಕಾವಲಿನ ಬುರುಜಿನ ಮೇಲೆ ನಿಂತಿದ್ದೇನೆ. ರಾತ್ರಿಯೆಲ್ಲಾ ಕಾವಲಿನ ಕೆಲಸ ನನಗೆ ಬಿದ್ದಿದೆ.</verse>
				<verse number="9">ಇಗೋ, ಎರಡು ಕುದುರೆಗಳನ್ನು ಹೊಂದಿರುವ ರಥದಲ್ಲಿ ಒಬ್ಬ ವ್ಯಕ್ತಿ ಸವಾರಿ ಮಾಡಿ ಬರುತ್ತಿದ್ದಾನೆ ಬಾಬಿಲೋನ್ ಬಿದ್ದುಹೋಯಿತು, ಬಾಬಿಲೋನ್ ಬಿದ್ದುಹೋಯಿತು! ಅದರ ಕೆತ್ತಿದ ದೇವತೆಗಳ ವಿಗ್ರಹಗಳೆಲ್ಲ ಮುರಿದು ನೆಲಸಮವಾಗಿವೆ.”</verse>
				<verse number="10">ಕಣದಲ್ಲಿ ತುಳಿತಕ್ಕೆ ಈಡಾದ ನನ್ನ ಜನರೇ ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರಿಂದ ನಾನು ಕೇಳಿದ್ದನ್ನು ನಿಮಗೆ ತಿಳಿಸಿದ್ದೇನೆ.</verse>
				<verse number="11">ದೂಮ ವಿಷಯವಾದ ಪ್ರವಾದನೆ: ಸೇಯೀರಿನಿಂದ ನನ್ನನ್ನು ಯಾರೋ ಹೀಗೆ ಕರೆಯುತ್ತಿದ್ದಾರೆ, “ಕಾವಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು? ಕಾವಲುಗಾರನೇ, ರಾತ್ರಿ ಎಷ್ಟು ಕಳೆಯಿತು?”</verse>
				<verse number="12">ಕಾವಲುಗಾರನು ಹೀಗೆ ಉತ್ತರಿಸಿದನು, “ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ. ವಿಚಾರಿಸಬೇಕಾದರೆ ವಿಚಾರಿಸಿರಿ, ತಿರುಗಿ ಬನ್ನಿರಿ.”</verse>
				<verse number="13">ಅರೇಬಿಯದ ವಿಷಯವಾದ ಪ್ರವಾದನೆ: ಓ ದೇದಾನ್ಯರ ವ್ಯಾಪಾರಿಗಳ ಗುಂಪಿನವರೇ ಅರೇಬಿಯದ ಕಾಡಿನಲ್ಲಿ ಇಳಿದುಕೊಳ್ಳಿರಿ.</verse>
				<verse number="14">ತೇಮಾ ದೇಶದ ನಿವಾಸಿಗಳೇ, ಬಾಯಾರಿದವರಿಗೆ ನೀರನ್ನು ತರುತ್ತಾರೆ. ಓಡಿ ಹೋಗುವವರನ್ನು ತಮ್ಮ ರೊಟ್ಟಿಯಿಂದ ನಿವಾರಿಸುತ್ತಾರೆ.</verse>
				<verse number="15">ಏಕೆಂದರೆ ಹಿರಿದ ಖಡ್ಗ, ಬಾಗಿದ ಬಿಲ್ಲು, ಕಠಿಣ ಯುದ್ಧ ಇವುಗಳಿಂದ ತಪ್ಪಿಸಿಕೊಂಡು ಓಡಿ ಬಂದಿದ್ದಾರಷ್ಟೆ.</verse>
				<verse number="16">ಏಕೆಂದರೆ ಕರ್ತರು ನನಗೆ ಹೀಗೆ ಹೇಳುತ್ತಾರೆ: “ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವುದು.</verse>
				<verse number="17">ಬಿಲ್ಲುಗಾರರಲ್ಲಿ ಕೆಲವರೂ, ಕೇದಾರಿನ ಬಲಿಷ್ಠರಲ್ಲಿ ಕೆಲವರು ಮಾತ್ರ ಉಳಿಯುವರು,” ಎಂದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ನುಡಿದಿದ್ದಾರೆ.</verse>
			</chapter>
			<chapter number="22">
				<verse number="1">ದಿವ್ಯ ದರ್ಶನದ ತಗ್ಗಿನ ವಿಷಯವಾದ ಪ್ರವಾದನೆ: ನಿನ್ನವರೆಲ್ಲರು ಮಾಳಿಗೆಗಳ ಮೇಲೆ ಏರುವ ಹಾಗೆ, ಈಗ ನಿನಗೆ ಏನಾಯಿತು?</verse>
				<verse number="2">ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ, ನಿನ್ನಲ್ಲಿ ಹತರಾದವರು ಖಡ್ಗದಿಂದ ಹತರಾದವರಲ್ಲ; ಯುದ್ಧದಲ್ಲಿ ಸತ್ತವರೂ ಅಲ್ಲ.</verse>
				<verse number="3">ನಿನ್ನ ಅಧಿಕಾರಸ್ಥರೆಲ್ಲ ಒಟ್ಟಿಗೆ ಓಡಿದರೂ ಬಿಲ್ಲುಗಾರರಿಲ್ಲದೆಯೇ ಸೆರೆಯಾಗಿದ್ದಾರೆ. ದೂರದಿಂದ ಓಡಿಬಂದರೂ ನಿನ್ನ ಜನರು ಶತ್ರುವಿನ ಕೈಗೆ ಸಿಕ್ಕಿಬಿದ್ದಿದ್ದಾರೆ.</verse>
				<verse number="4">ಹೀಗಿರಲು ನಾನು ಹೀಗೆ ಹೇಳಿದೆನು, “ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ. ಬಹು ಸಂಕಟದಿಂದ ನಾನು ಅಳುವೆನು. ಏಕೆಂದರೆ ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವುದಕ್ಕೆ ತವಕಗೊಳ್ಳದಿರಿ.”</verse>
				<verse number="5">ಕರ್ತ ಆಗಿರುವವರೂ, ಸರ್ವಶಕ್ತರೂ ಆದ ಯೆಹೋವ ದೇವರು, ದರ್ಶನದ ತಗ್ಗಿನಲ್ಲಿ ಶ್ರಮೆಯ ತುಳಿದಾಟದ ಭಯಭ್ರಾಂತಿಯ ದಿನವನ್ನು ಇಟ್ಟಿದ್ದಾರೆ. ಅದು ಗೋಡೆಗಳು ಹೊಡೆದುರುಳಿಸುವ ದಿನವು. ಪರ್ವತಗಳಿಗೆ ಜನರು ಕೂಗಾಡುವ ದಿನವದು.</verse>
				<verse number="6">ಏಲಾಮಿನವರು ಕುದುರೆಗಳ, ರಥಗಳ ಸಂಗಡ ಬತ್ತಳಿಕೆಯನ್ನು ಹೊತ್ತುಕೊಂಡು ಬಂದರು. ಕೀರಿನವರು ಗುರಾಣಿಯನ್ನು ತೆರೆದರು.</verse>
				<verse number="7">ನಿಮ್ಮ ಪ್ರಿಯವಾದ ಕಣಿವೆಗಳಲ್ಲಿ ರಥಗಳು ತುಂಬಿರುವುವು. ರಾಹುತರು ಪಟ್ಟಣದ ಬಾಗಿಲಿನ ಹತ್ತಿರ ಸಿದ್ಧಮಾಡಿಕೊಳ್ಳುವರು.</verse>
				<verse number="8">ಕರ್ತರು ಯೆಹೂದದ ಸಂರಕ್ಷಣೆಯ ಮುಸುಕನ್ನು ತೆಗೆದಿದ್ದಾರೆ. ಆ ದಿವಸದಲ್ಲಿ ಅಡವಿ ಅರಮನೆಯ ಯುದ್ಧ ಸಾಮಗ್ರಿಯ ಕಡೆಗೆ ದೃಷ್ಟಿ ಇಡುತ್ತೀಯೆ.</verse>
				<verse number="9">ದಾವೀದನ ಪಟ್ಟಣದ ಕೋಟೆಯ ಒಡಕುಗಳನ್ನು ಬಹಳವೆಂದು ಸಹ ನೋಡುತ್ತೀರಿ. ಕೆಳಗಿನ ಕೊಳಕ್ಕೆ ನೀರನ್ನು ತುಂಬಿಸುತ್ತೀರಿ.</verse>
				<verse number="10">ಯೆರೂಸಲೇಮಿನ ಮನೆಗಳನ್ನು ಲೆಕ್ಕ ಮಾಡಿ ಪೌಳಿಗೋಡೆಯನ್ನು ಭದ್ರಪಡಿಸುವುದಕ್ಕೆ ನೀವು ಮನೆಗಳನ್ನು ಒಡೆದುಹಾಕುತ್ತೀರಿ.</verse>
				<verse number="11">ಎರಡು ಗೋಡೆಗಳ ನಡುವೆ ಹಳೆಯ ಕೆರೆಯ ನೀರಿಗೋಸ್ಕರ ತೊಟ್ಟಿಯನ್ನು ಮಾಡಿದ್ದೀರಿ, ಕಾಲುವೆ ಮಾಡುತ್ತೀರಿ. ಆದರೆ ಅದನ್ನು ಮಾಡಿದವನನ್ನು ನೀವು ದೃಷ್ಟಿಸುವುದಿಲ್ಲ. ಇಲ್ಲವೆ ಪುರಾತನ ಕಾಲದಲ್ಲಿ ಸಂಕಲ್ಪಿಸಿದವರನ್ನು ನೀನು ಲಕ್ಷಿಸುವುದಿಲ್ಲ.</verse>
				<verse number="12">ಆ ದಿವಸದಲ್ಲಿ ಅತ್ತು, ದುಃಖಿಸಿ, ತಲೆ ಬೋಳಿಸಿಕೊಂಡು, ಗೋಣಿತಟ್ಟನ್ನು ಸುತ್ತಿಕೊಳ್ಳಬೇಕೆಂದು ಸರ್ವಶಕ್ತ ದೇವರಾದ ಯೆಹೋವ ದೇವರು ನಿಮ್ಮನ್ನು ಕರೆದರು.</verse>
				<verse number="13">ಆದರೆ ಉತ್ಸಾಹವು, ಸಂತೋಷವು, ದನ ಕೊಳ್ಳುವುದು, ಕುರಿ ಕಡಿಯುವುದು, ಮಾಂಸವನ್ನು ತಿನ್ನುವುದು, ದ್ರಾಕ್ಷಾರಸ ಕುಡಿಯುವುದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯುವುದೇ ನಿಮ್ಮ ಕಾರ್ಯ.</verse>
				<verse number="14">ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದು ಏನೆಂದರೆ: “ನಿಶ್ಚಯವಾಗಿ ಈ ದುಷ್ಕೃತ್ಯಗಳನ್ನು ನೀವು ಸಾಯುವ ತನಕ ಮನ್ನಿಸುವುದೇ ಇಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳಿದ್ದಾರೆ.</verse>
				<verse number="15">ಸೇನಾಧೀಶ್ವರ ಯೆಹೋವ ದೇವರು ಪುನಃ ಹೀಗೆ ನುಡಿದಿದ್ದಾರೆ: “ಹೋಗು, ಅರಮನೆಯ ಉಗ್ರಾಣದವನಾದ ಶೆಬ್ನ ಎಂಬ ಖಜಾಂಚಿಯ ಬಳಿಗೆ ಹೋಗಿ ಹೀಗೆ ಹೇಳು:</verse>
				<verse number="16">ನಿನಗೆ ಇಲ್ಲಿ ಏನು ಕೆಲಸ? ಇಲ್ಲಿ ನಿನಗೆ ಯಾರಿದ್ದಾರೆ? ನೀನು ಉನ್ನತದಲ್ಲಿ ನಿನಗೆ ಸಮಾಧಿಯನ್ನು ತೋಡಿಸಿದೆ, ಬಂಡೆಯಲ್ಲಿ ನಿನಗೆ ನಿವಾಸವನ್ನು ಕೆತ್ತಿಸುವವನ ಹಾಗೆ, ನಿನಗೆ ಇಲ್ಲಿ ಸಮಾಧಿಯನ್ನು ತೋಡಿಸಿದಿ ಅಲ್ಲವೇ?</verse>
				<verse number="17">“ಯೆಹೋವ ದೇವರು ನಿನ್ನನ್ನು ಬಲವಾದ ಬಂಧನದೊಂದಿಗೆ ಹಿಡಿದೇ ಹಿಡಿಯುವರು.</verse>
				<verse number="18">ನಿನ್ನನ್ನು ಚೆಂಡಿನಂತೆ ಸುತ್ತಿ ಸುತ್ತಿ ತಿರುಗಿಸಿ, ವಿಸ್ತಾರವಾದ ದೇಶಕ್ಕೆ ಬಿಸಾಡುವರು. ಅಲ್ಲೇ ನೀನು ಸಾಯುವೆ, ನಿನ್ನ ವೈಭವದ ರಥಗಳು ನಿನ್ನ ಧಣಿಯ ಮನೆಗೆ ಅವಮಾನವನ್ನುಂಟು ಮಾಡುವುವು.</verse>
				<verse number="19">ನಿನ್ನನ್ನು ನಿನ್ನ ಉದ್ಯೋಗದಿಂದ ತಳ್ಳಿಬಿಡುವೆನು. ನಿನ್ನ ಪದವಿಯಿಂದ ನಿನ್ನನ್ನು ಕೆಳಗೆ ಎಳೆದುಬಿಡುವೆನು.</verse>
				<verse number="20">“ಆ ದಿನದಲ್ಲಿ ನನ್ನ ಸೇವಕನೂ, ಹಿಲ್ಕೀಯನ ಮಗನೂ ಆದ ಎಲ್ಯಾಕೀಮನನ್ನು ಕರೆದು,</verse>
				<verse number="21">ನಿನ್ನ ಅಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟಿನಿಂದ ಅವನನ್ನು ಬಲಪಡಿಸಿ, ನಿನ್ನ ಅಧಿಕಾರವನ್ನು ಅವನಿಗೆ ಒಪ್ಪಿಸುವೆನು. ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಜನರಿಗೂ ತಂದೆಯಾಗಿರುವನು.</verse>
				<verse number="22">ದಾವೀದನ ಮನೆಗೆ ಬೀಗದ ಕೈಯನ್ನು ಅವನ ಹೆಗಲ ಮೇಲೆ ನಾನು ಹಾಕುವೆನು. ಅವನು ತೆರೆದರೆ ಯಾರೂ ಮುಚ್ಚರು, ಅವನು ಮುಚ್ಚಿದರೆ ಯಾರೂ ತೆರೆಯರು.</verse>
				<verse number="23">ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ಹೊಡೆದ ಹಾಗೆ ಅವನನ್ನು ಭದ್ರಪಡಿಸುವೆನು. ಅವನು ತನ್ನ ತಂದೆಯ ಮನೆಗೆ ವೈಭವವುಳ್ಳ ಸಿಂಹಾಸನವಾಗಿರುವನು.</verse>
				<verse number="24">ಬಟ್ಟಲು ಮೊದಲುಗೊಂಡು ಕೊಡದ ತನಕ, ಸಕಲ ಸಾಧಾರಣ ಪಾತ್ರೆಗಳನ್ನು ಅಂದರೆ ತಂದೆಯ ಸಂತಾನ, ಸಂತತಿಯಾದ ಅವನ ಮನೆಯ ಎಲ್ಲಾ ವೈಭವವನ್ನು ಅವರು ಅವನಿಗೆ ವಹಿಸುವರು.</verse>
				<verse number="25">“ಆ ದಿನದಲ್ಲಿ,” ಸೇನಾಧೀಶ್ವರ ಯೆಹೋವ ದೇವರು ಪ್ರಕಟಿಸುವುದು ಏನೆಂದರೆ, “ಭದ್ರವಾದ ಸ್ಥಳದಲ್ಲಿ ಮೊಳೆಯನ್ನು ತೆಗೆದುಹಾಕಿ, ಕುಸಿದುಬೀಳುವುದು. ಮೊಳೆಯ ಮೇಲೆ ಇದ್ದ ಭಾರವೂ ತೆಗೆದುಹಾಕಲಾಗುವುದು,” ಇದು ಯೆಹೋವ ದೇವರ ನುಡಿ.</verse>
			</chapter>
			<chapter number="23">
				<verse number="1">ಟೈರಿನ ವಿಷಯವಾದ ಪ್ರವಾದನೆ: ತಾರ್ಷೀಷಿನ ಹಡಗುಗಳೇ, ಗೋಳಾಡಿರಿ, ಏಕೆಂದರೆ ಟೈರ್ ಹಾಳಾಗಿರುವುದರಿಂದ ನಿಮಗೆ ಮನೆಯಿಲ್ಲ ಮತ್ತು ಬಂದರವೂ ಇಲ್ಲ. ಇದು ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.</verse>
				<verse number="2">ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ದಾಟುವ ಸೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ ಮೌನವಾಗಿರಿ.</verse>
				<verse number="3">ಪ್ರವಾಹದಿಂದ ಶೀಹೋರಿನ ಧಾನ್ಯವೂ, ನೈಲ್ ನದಿಯ ಸುಗ್ಗಿಯೂ ಅದಕ್ಕೆ ಆದಾಯವಾಗಿತ್ತು. ಅನೇಕ ಜನಾಂಗಗಳಿಗೆ ವ್ಯಾಪಾರ ಸ್ಥಳವಾಗಿತ್ತು.</verse>
				<verse number="4">ಸೀದೋನೇ ಮತ್ತು ಸಮುದ್ರದ ಕೋಟೆಯೇ ನಾಚಿಕೆಪಡಿರಿ. ಏಕೆಂದರೆ ಇದೇ ಸಮುದ್ರದ ಘೋಷಣೆಯಾಗಿದೆ: “ನಾವು ಪ್ರಸವವೇದನೆ ಪಡುವುದಿಲ್ಲ, ಹೆರುವುದಿಲ್ಲ, ಇಲ್ಲವೆ ಪುತ್ರಪುತ್ರಿಯರನ್ನು ಸಾಕಿ ಸಲಹುವುದಿಲ್ಲ,”</verse>
				<verse number="5">ಈಜಿಪ್ಟಿನಿಂದ ಸುದ್ದಿ ಆದ ಹಾಗೆ ಟೈರಿನ ಸುದ್ದಿಗೆ ಬಹಳ ವೇದನೆ ಪಡುವರು.</verse>
				<verse number="6">ತಾರ್ಷೀಷಿಗೆ ದಾಟಿ ಹೋಗಿರಿ, ದ್ವೀಪ ನಿವಾಸಿಗಳೇ ಗೋಳಾಡಿರಿ.</verse>
				<verse number="7">ನಿಮ್ಮ ಉಲ್ಲಾಸದ ಪಟ್ಟಣವೂ, ಪೂರ್ವಕಾಲದ ಹಳೆಯ ಸಂಪ್ರದಾಯದಿಂದ ಬಂದಿದ್ದೂ ಇದೆಯೋ? ಅವಳ ಸ್ವಂತ ಕಾಲುಗಳು ಅದನ್ನು ದೂರ ದೇಶದಲ್ಲಿ ನಿವಾಸಿಸುವುದಕ್ಕೆ ತೆಗೆದುಕೊಂಡು ಹೋಗುವವು.</verse>
				<verse number="8">ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರಾದ ಪ್ರಭುಗಳು, ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ಟೈರಿಗೆ ವಿರುದ್ಧವಾಗಿ ಈ ಆಲೋಚನೆ ಮಾಡಿದವರು ಯಾರು?</verse>
				<verse number="9">ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರ ಯೆಹೋವ ದೇವರೇ ಹೀಗೆ ಸಂಕಲ್ಪಿಸಿದ್ದಾರೆ.</verse>
				<verse number="10">ತಾರ್ಷೀಷಿನ ಮಗಳೇ, ನೈಲ್ ನದಿಯಂತೆ ನಿನ್ನ ದೇಶದಲ್ಲಿ ಹಾದುಹೋಗು. ಅಲ್ಲಿ ಇನ್ನು ನಿನ್ನನ್ನು ತಡೆಯುವವರು ಯಾರೂ ಇಲ್ಲ.</verse>
				<verse number="11">ಯೆಹೋವ ದೇವರು ಸಮುದ್ರದ ಮೇಲೆ ತನ್ನ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. ಅವರು ವ್ಯಾಪಾರದ ಪಟ್ಟಣವನ್ನು ಕಾನಾನಿನ ದುರ್ಗಗಳನ್ನು ನಾಶಮಾಡಬೇಕೆಂದು ಆಜ್ಞಾಪಿಸಿದ್ದಾರೆ.</verse>
				<verse number="12">“ಹಿಂಸೆಗೆ ಈಡಾದ ಕನ್ಯೆಯಂತಿರುವ ಸೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಸಂತೃಪ್ತಿ ಇಲ್ಲ. “ಎದ್ದು, ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು. ಅಲ್ಲಿಯೂ ನಿನಗೆ ವಿಶ್ರಾಂತಿ ಇರದು.”</verse>
				<verse number="13">ಕಸ್ದೀಯರ ದೇಶವು! ಅಸ್ಸೀರಿಯದವರು ಅದನ್ನು ಕಾಡುಮೃಗಗಳಿಗೆ ಈಡು ಮಾಡುವ ತನಕ ಈ ಜನರು ಇರಲಿಲ್ಲ. ಗೋಪುರಗಳನ್ನು ಕಟ್ಟಿಸಿಕೊಂಡು ಅವರು ಅದರ ಅರಮನೆಗಳನ್ನು ಕಟ್ಟಿಸಿಕೊಂಡು ಅದನ್ನು ನಾಶಮಾಡಿದ್ದಾರೆ.</verse>
				<verse number="14">ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯಸ್ಥಾನವು ಹಾಳಾಯಿತು, ಎಂದು ಆತನು ಹೇಳಿದ್ದಾನೆ.</verse>
				<verse number="15">ಆ ದಿವಸದಲ್ಲಿ ಟೈರ್ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ ಜ್ಞಾಪಕಕ್ಕೆ ಬಾರದೆ ಇರುವುದು. ಎಪ್ಪತ್ತು ವರ್ಷಗಳ ಕೊನೆಯಲ್ಲಿ ಟೈರ್ ಪಟ್ಟಣವು ವೇಶ್ಯೆಯ ವಿಷಯವಾದ ಈ ಗೀತೆಯ ಹಾಗಾಗುವುದು:</verse>
				<verse number="16">“ಮರೆತುಹೋದ ವೇಶ್ಯೆಯೇ, ಕಿನ್ನರಿಯನ್ನು ತೆಗೆದುಕೋ. ಪಟ್ಟಣಗಳಲ್ಲಿ ಅಲೆಯುತ್ತಾ ನೀನು ನೆನಪಾಗುವ ಹಾಗೆ ಚೆನ್ನಾಗಿ ನುಡಿಸಿ, ಬಹಳ ಗೀತೆಗಳನ್ನು ಹಾಡು.”</verse>
				<verse number="17">ಎಪ್ಪತ್ತು ವರುಷಗಳಾದ ಮೇಲೆ ಯೆಹೋವ ದೇವರು ಟೈರನ್ನು ಪರಾಮರಿಸುವರು. ಅದು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದವರಲ್ಲಿರುವ ಎಲ್ಲಾ ರಾಜ್ಯಗಳ ಸಂಗಡ ಭೂಮಿಯ ಮೇಲೆ ವ್ಯಾಪಾರ ಮಾಡುವುದು.</verse>
				<verse number="18">ಆದರೆ ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಯೆಹೋವ ದೇವರಿಗೆ ಪರಿಶುದ್ಧವಾಗುವುದು. ಅವಳ ಆದಾಯವು ಯೆಹೋವ ದೇವರ ಸನ್ನಿಧಾನದಲ್ಲಿ ವಾಸಿಸುವವರೆಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು.</verse>
			</chapter>
			<chapter number="24">
				<verse number="1">ಇಗೋ, ಯೆಹೋವ ದೇವರು ಭೂಮಿಯನ್ನು ಬರಿದುಮಾಡಿ, ನಿರ್ಜನ ಪ್ರದೇಶವನ್ನಾಗಿ ಮಾಡಿ, ತಲೆಕೆಳಗಾಗಿ ತಿರುಗಿಸಿ, ಅದರ ನಿವಾಸಿಗಳನ್ನು ಚದರಿಸಿಬಿಡುವವರಾಗಿದ್ದಾರೆ.</verse>
				<verse number="2">ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೆ; ದಾಸನಿಗೆ ಹೇಗೋ ಹಾಗೆಯೇ ಯಜಮಾನನಿಗೆ; ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ಸಾಲ ಪಡೆಯುವವನಿಗೆ; ಬಡ್ಡಿ ತೆಗೆಯುವವನಿಗೆ ಹೇಗೋ ಹಾಗೆಯೇ ಬಡ್ಡಿ ತರುವವನಿಗೆ ಆಗುವುದು.</verse>
				<verse number="3">ಭೂಮಿಯು ಬಟ್ಟಬರಿದಾಗುವುದು, ಸಂಪೂರ್ಣ ಸುಲಿಗೆಯಾಗುವುದು. ಯೆಹೋವ ದೇವರು ತಾವೇ ಈ ಮಾತನ್ನು ಹೇಳಿದ್ದಾರೆ.</verse>
				<verse number="4">ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವುದು. ಲೋಕವು ಸೊರಗಿ ಬಾಡಿಹೋಗುವುದು. ಆಕಾಶವು ಭೂಮಿಯೊಂದಿಗೆ ಕುಗ್ಗಿಹೋಗುವುದು.</verse>
				<verse number="5">ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ದೈವನಿಯಮಗಳನ್ನು ಬದಲಾಯಿಸಿ, ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆಯಿಂದ ಅಪವಿತ್ರವಾಗುವುದು.</verse>
				<verse number="6">ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ. ಅದರಲ್ಲಿ ವಾಸವಾಗಿರುವವರು ದಂಡನೆಗೆ ಒಳಗಾಗಿದ್ದಾರೆ. ಆದ್ದರಿಂದ ಭೂನಿವಾಸಿಗಳು ಸುಟ್ಟು ಹೋಗಿ, ಕೆಲವರು ಮಾತ್ರ ಉಳಿದಿದ್ದಾರೆ.</verse>
				<verse number="7">ದ್ರಾಕ್ಷಾರಸವು ಬತ್ತಿಹೋಗುವುದು, ದ್ರಾಕ್ಷಿಯು ಬಾಡುವುದು. ಹರ್ಷ ಹೃದಯರೆಲ್ಲಾ ನಿಟ್ಟುಸಿರುಬಿಡುತ್ತಾರೆ.</verse>
				<verse number="8">ದಮ್ಮಡಿಗಳ ಉತ್ಸಾಹವು ಮುಗಿದಿದೆ. ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು.</verse>
				<verse number="9">ಇನ್ನು ಗಾನದೊಡನೆ ದ್ರಾಕ್ಷಾರಸವನ್ನು ಕುಡಿಯರು, ಕುಡಿಯುವವರಿಗೆ ಮದ್ಯಪಾನವು ಕಹಿಯಾಗುವುದು.</verse>
				<verse number="10">ಹಾಳುಪಟ್ಟಣವು ಬಿದ್ದುಹೋಗಿದೆ. ಯಾರು ಒಳಗೆ ಬಾರದಂತೆ ಪ್ರತಿಯೊಂದು ಮನೆಯು ಮುಚ್ಚಿದೆ.</verse>
				<verse number="11">ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ. ಉಲ್ಲಾಸವೆಲ್ಲ ಅಸ್ತಮಿಸಿದೆ. ಭೂಮಿಯ ಮೇಲಿನ ಸಂತೋಷವು ತೊಲಗಿಹೋಗಿದೆ.</verse>
				<verse number="12">ಪಟ್ಟಣದಲ್ಲಿ ಹಾಳೇ ಉಳಿದಿವೆ. ನಾಶನವು ಹೆಬ್ಬಾಗಿಲಿಗೆ ಬಡಿದಿದೆ.</verse>
				<verse number="13">ಓಲಿವ್ ಮರವನ್ನು ಬಡಿದ ಮೇಲೆಯೂ, ದ್ರಾಕ್ಷಿ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವುದು.</verse>
				<verse number="14">ಅವರು ತಮ್ಮ ಸ್ವರವನ್ನೆತ್ತಿ ಯೆಹೋವ ದೇವರ ಮಹಿಮೆಯನ್ನು ಕುರಿತು ಹಾಡುವರು. ಪಶ್ಚಿಮ ದಿಕ್ಕಿನ ಕಡೆಯಿಂದ ಆರ್ಭಟಿಸುವರು.</verse>
				<verse number="15">ಆದ್ದರಿಂದ ಪೂರ್ವದಿಕ್ಕಿನವರೇ, ಯೆಹೋವ ದೇವರನ್ನು ಮಹಿಮೆಪಡಿಸಿರಿ; ಸಮುದ್ರದ ದ್ವೀಪಗಳಲ್ಲಿ ಇಸ್ರಾಯೇಲರ ದೇವರಾದ ಯೆಹೋವ ದೇವರ ಹೆಸರನ್ನು ನೀವು ಘನಪಡಿಸಿರಿ, ಎಂದು ಕೂಗುವರು.</verse>
				<verse number="16">ಭೂಮಂಡಲದ ಕಟ್ಟಕಡೆಯಿಂದ “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿಬರುತ್ತಿವೆ. ಆದರೆ, “ನಾನಾದರೋ ಕ್ಷಯಿಸೇ ಕ್ಷಯಿಸುತ್ತೇನೆ. ನನಗೆ ಕಷ್ಟ! ಬಾಧಕರು ಬಾಧಿಸುವುದರಲ್ಲಿಯೇ ನಿರತರಾಗಿದ್ದಾರೆ. ಹೌದು, ಬಾಧಕರು ಬಹಳವಾಗಿ ಬಾಧಿಸುವುದರಲ್ಲಿ ನಿರತರಾಗಿದ್ದಾರೆ.”</verse>
				<verse number="17">ಭೂಮಿಯ ನಿವಾಸಿಗಳೇ, ಭಯವೂ, ಕುಳಿಯೂ, ಬಲೆಯೂ ನಿಮಗೆ ಕಾದಿವೆ.</verse>
				<verse number="18">ಆಗ ಭಯದ ಶಬ್ದಕ್ಕೆ ಓಡಿಹೋಗುವವನು ಗುಂಡಿಯೊಳಗೆ ಬೀಳುವನು. ಗುಂಡಿಯೊಳಗಿಂದ ಏರಿಬರುವವನು ಬಲೆಗೆ ಸಿಕ್ಕಿಬೀಳುವನು. ಆಕಾಶದ ದ್ವಾರಗಳು ತೆರೆದಿವೆ. ಭೂಮಿಯ ಅಸ್ತಿವಾರಗಳು ಕಂಪಿಸುತ್ತಿವೆ.</verse>
				<verse number="19">ಭೂಮಿಯು ಬಿರುಕುಬಿಟ್ಟಿದೆ, ಬಿರಿದು ಬಿರಿದಿದೆ, ಭೂಮಿಯು ಕದಲಿಹೋಗಿದೆ.</verse>
				<verse number="20">ಭೂಮಿಯು ಕುಡುಕನ ಹಾಗೆ ಓಲಾಡುತ್ತದೆ, ಗಾಳಿಗೆ ಸಿಕ್ಕಿದ ಗುಡಿಸಲಿನ ಹಾಗೆ ತೂಗಾಡುತ್ತದೆ, ಅದರ ಅಪರಾಧವು ಅದರ ಮೇಲೆ ಭಾರವಾಗಿರುತ್ತದೆ, ಅದು ಬಿದ್ದು ಹೋಗುತ್ತದೆ, ತಿರುಗಿ ಏಳುವುದೇ ಇಲ್ಲ.</verse>
				<verse number="21">ಆ ದಿವಸದಲ್ಲಿ ಯೆಹೋವ ದೇವರು ಆಕಾಶದಲ್ಲಿರುವ ಆಕಾಶದವರ ಸೈನ್ಯವನ್ನೂ, ಭೂಮಿಯ ಮೇಲಿರುವ ಭೂರಾಜರನ್ನೂ ದಂಡಿಸುವರು.</verse>
				<verse number="22">ನೆಲಮಾಳಿಗೆಯೊಳಗೆ ಒಟ್ಟುಗೂಡಿದ ಸೆರೆಯವರ ಹಾಗೆ ಅವರು ಒಟ್ಟುಗೂಡಿ ಸೆರೆಮನೆಯಲ್ಲಿ ಬಹಳ ದಿನಗಳಿದ್ದ ತರುವಾಯ ದಂಡನೆಗೆ ಗುರಿಯಾಗುವರು.</verse>
				<verse number="23">ಆಮೇಲೆ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತದಲ್ಲಿಯೂ, ಯೆರೂಸಲೇಮಿನಲ್ಲಿಯೂ ಹಿರಿಯರ ಮುಂದೆ ಮಹಿಮೆಯಿಂದ ಆಳುವಾಗ, ಚಂದ್ರನಿಗೆ ಅವಮಾನವಾಗುವುದು, ಸೂರ್ಯನು ನಾಚಿಕೆ ಪಡುವನು.</verse>
			</chapter>
			<chapter number="25">
				<verse number="1">ಯೆಹೋವ ದೇವರೇ, ನೀವೇ ನನ್ನ ದೇವರು. ನೀವು ಸತ್ಯ ಪ್ರಾಮಾಣಿಕತೆಗಳನ್ನು ಆಲೋಚಿಸಿ, ಅನುಸರಿಸಿ ಆದಿಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಕಾರ್ಯಗಳನ್ನು ನಡೆಸಿದ ಕಾರಣ ನಿಮ್ಮನ್ನು ಉನ್ನತಪಡಿಸಿ, ನಿಮ್ಮ ನಾಮವನ್ನು ಕೊಂಡಾಡುವೆನು.</verse>
				<verse number="2">ಏಕೆಂದರೆ ನೀವು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳುದಿಬ್ಬವನ್ನಾಗಿಯೂ ವಿದೇಶಿಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಬಾರದಂತೆ ಮಾಡಿದ್ದೀರಿ.</verse>
				<verse number="3">ಬಲಿಷ್ಠವಾದ ಜನಾಂಗವು ನಿಮ್ಮನ್ನು ಘನಪಡಿಸುವರು, ಭಯಂಕರವಾದ ಜನರ ಪಟ್ಟಣವು ನಿಮಗೆ ಅಂಜುವುದು.</verse>
				<verse number="4">ನೀವು ದೀನರಿಗೆ ಕೋಟೆಯೂ, ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ, ಭೀಕರರ ಶ್ವಾಸವು ಬಿಸಿಲಿಗೆ ನೆರಳೂ, ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋಸ್ಕರ ಆಶ್ರಯವೂ ಆಗಿದ್ದೀರಿ.</verse>
				<verse number="5">ಮೇಘವು ಒಣನೆಲದ ಕಾವನ್ನು ಆರಿಸುವ ಹಾಗೆ, ನೀವು ವಿದೇಶಿಯರ ಗದ್ದಲವನ್ನು ಅಡಗಿಸುವಿರಿ; ಮೋಡದ ನೆರಳಿನಿಂದ ಬಿಸಿಲು ತಡೆಯುವ ಹಾಗೆಯೇ, ನೀವು ಕ್ರೂರಿಗಳ ಉತ್ಸಾಹಗಾನವನ್ನು ನಿಲ್ಲಿಸಿಬಿಡುವಿರಿ.</verse>
				<verse number="6">ಸೇನಾಧೀಶ್ವರ ಯೆಹೋವ ದೇವರು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ ಕೊಬ್ಬಿದ ಔತಣವನ್ನೂ, ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸವನ್ನೂ ಸಿದ್ಧಮಾಡುವರು.</verse>
				<verse number="7">ಸಮಸ್ತ ಜನಾಂಗಗಳನ್ನು ಮುಚ್ಚಿರುವ ಪರದೆಯನ್ನೂ, ಸಕಲ ದೇಶದವರ ಮೇಲೆ ಹರಡಿರುವ ತೆರೆಯನ್ನೂ ಇದೇ ಪರ್ವತದಲ್ಲಿ ತೆಗೆದುಹಾಕುವರು.</verse>
				<verse number="8">ಅವರು ಮರಣವನ್ನು ಜಯದಲ್ಲಿ ನುಂಗಿಬಿಡುವರು. ಸಾರ್ವಭೌಮ ಯೆಹೋವ ದೇವರು ಎಲ್ಲಾ ಮುಖಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವರು. ತಮ್ಮ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕುವರು. ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.</verse>
				<verse number="9">ಆ ದಿನದಲ್ಲಿ ಜನರು, “ಇಗೋ, ಇವರೇ ನಮ್ಮ ದೇವರು, ನಾವು ಇವರನ್ನೇ ನಂಬಿದ್ದೇವೆ. ಇವರೇ ನಮ್ಮನ್ನು ರಕ್ಷಿಸುವರು. ಇವರೇ ಯೆಹೋವ ದೇವರು, ನಾವು ಇವರನ್ನೇ ನಂಬಿದ್ದೇವೆ, ನಾವು ಇವರ ರಕ್ಷಣೆಯಲ್ಲಿ ಹರ್ಷಿಸಿ ಸಂತೋಷಪಡುವೆವು,” ಎಂದು ಹೇಳುವರು.</verse>
				<verse number="10">ಈ ಪರ್ವತದಲ್ಲಿ ಯೆಹೋವ ದೇವರ ಕೈ ವಿಶ್ರಮಿಸಿಕೊಳ್ಳುವುದು. ಒಣಹುಲ್ಲನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ತುಳಿತಕ್ಕೆ ಈಡಾಗುವುದು.</verse>
				<verse number="11">ಈಜುವವನು ಈಜುವುದಕ್ಕೆ ಕೈಗಳನ್ನು ಹರಡಿಕೊಂಡ ಹಾಗೆ, ಅವರು ತಮ್ಮ ಕೈಗಳನ್ನು ಚಾಚುವರು. ಆದರೆ ದೇವರು ಅವರ ಗರ್ವವನ್ನೂ ಅವರ ಕೈ ಕೆಲಸವನ್ನೂ ತಗ್ಗಿಸಿಬಿಡುವರು.</verse>
				<verse number="12">ದುರ್ಗದಂತೆ ಎತ್ತರವಾಗಿರುವ ನಿನ್ನ ಕೋಟೆಗಳನ್ನು ಕೆಡವಿ, ತಗ್ಗಿಸಿ, ನೆಲಸಮಮಾಡುವರು, ಅದು ಧೂಳುಪಾಲಾಗುವುದು.</verse>
			</chapter>
			<chapter number="26">
				<verse number="1">ಆ ದಿವಸದಲ್ಲಿ ಯೆಹೂದ ದೇಶದಲ್ಲಿ ಈ ಹಾಡನ್ನು ಹಾಡುವರು: ನಮಗೆ ಬಲವಾದ ಪಟ್ಟಣವಿದೆ, ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ದೇವರು ಮಾಡುವರು.</verse>
				<verse number="2">ಬಾಗಿಲುಗಳನ್ನು ತೆರೆಯಿರಿ. ಸತ್ಯವನ್ನು ಕೈಗೊಳ್ಳುವ ನೀತಿಯುಳ್ಳ ಜನಾಂಗವು ಒಳಗೆ ಪ್ರವೇಶಿಸಲಿ.</verse>
				<verse number="3">ದೃಢ ಮನಸ್ಸುಳ್ಳವರನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವೆ, ಏಕೆಂದರೆ ಅವರಿಗೆ ನಿನ್ನಲ್ಲಿ ಭರವಸವಿದೆ.</verse>
				<verse number="4">ನೀವು ಯೆಹೋವ ದೇವರಲ್ಲಿ ಸದಾ ಭರವಸವಿಡಿರಿ, ಏಕೆಂದರೆ ಯೆಹೋವ ದೇವರು, ಹೌದು ಯೆಹೋವ ದೇವರೇ, ನಿತ್ಯವಾದ ಬಂಡೆಯಾಗಿದ್ದಾರೆ.</verse>
				<verse number="5">ಅವರು ಎತ್ತರದಲ್ಲಿ ವಾಸಿಸುವವರನ್ನು ಇಳಿಸಿದ್ದಾರೆ. ಉನ್ನತದಲ್ಲಿರುವ ಪಟ್ಟಣವನ್ನು ತಗ್ಗಿಸಿದ್ದಾರೆ. ಅದನ್ನು ಕೆಡವಿ ನೆಲಸಮಮಾಡಿ ಧೂಳಿಗೆ ತಂದಿದ್ದಾರೆ.</verse>
				<verse number="6">ಕಾಲು, ಬಡವರ ಕಾಲುಗಳೂ, ದೀನರ ಪಾದಗಳೂ ಅದನ್ನು ತುಳಿಯುವುವು.</verse>
				<verse number="7">ನೀತಿವಂತನ ಮಾರ್ಗವು ಸಮಾನವಾಗಿದೆ. ನೀನು ಅತ್ಯಧಿಕವಾದ ಯಥಾರ್ಥವಂತನು, ನೀತಿವಂತನ ದಾರಿಯನ್ನು ಸರಿಪಡಿಸಿ ಸಮಮಾಡುತ್ತಿ,</verse>
				<verse number="8">ಹೌದು, ಯೆಹೋವ ದೇವರೇ, ನಿಮ್ಮ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಾವು ನಿಮಗೋಸ್ಕರ ಕಾದುಕೊಂಡಿದ್ದೇವೆ, ನಿಮ್ಮ ನಾಮಸ್ಮರಣೆಯೇ ನಮ್ಮ ಹೃದಯದ ಬಯಕೆ.</verse>
				<verse number="9">ರಾತ್ರಿಯಲ್ಲಿ ನಿಮ್ಮನ್ನು ಮನಃಪೂರ್ವಕವಾಗಿ ಬಯಸಿದ್ದೇನೆ. ನನ್ನಲ್ಲಿರುವ ನನ್ನ ಆತ್ಮದೊಂದಿಗೆ ನಿಮ್ಮನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ. ಏಕೆಂದರೆ ಭೂಮಿಗೆ ನಿಮ್ಮ ನ್ಯಾಯತೀರ್ಪುಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.</verse>
				<verse number="10">ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ ನೀತಿಯನ್ನು ಅವನು ಕಲಿಯಲಾರನು. ಯಥಾರ್ಥವಂತನ ದೇಶದಲ್ಲಿ ಅವನು ಅನ್ಯಾಯವನ್ನು ಆಚರಿಸುವನು ಮತ್ತು ಯೆಹೋವ ದೇವರ ಮಹತ್ವವನ್ನು ಲಕ್ಷಿಸುವುದಿಲ್ಲ.</verse>
				<verse number="11">ಯೆಹೋವ ದೇವರೇ, ನಿಮ್ಮ ಕೈ ಮೇಲಕ್ಕೆ ಎತ್ತಲಾಗಿದೆ. ಆದರೆ ಅವರು ಅದನ್ನು ಕಾಣುವುದಿಲ್ಲ. ನಿಮ್ಮ ಜನರಿಗಾಗಿ ನಿಮ್ಮ ಉತ್ಸಾಹವನ್ನು ಅವರು ನೋಡಲಿ ಮತ್ತು ನಾಚಿಕೆಪಡಲಿ; ನಿನ್ನ ವಿರೋಧಿಗಳಿಗಾಗಿದ್ದ ಅಗ್ನಿಯು ಅದನ್ನು ದಹಿಸಿಬಿಡಲಿ.</verse>
				<verse number="12">ಯೆಹೋವ ದೇವರೇ, ನಮಗೆ ಸಮಾಧಾನವನ್ನು ವಿಧಿಸುವಿರಿ. ಏಕೆಂದರೆ ನೀವು ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀರಿ.</verse>
				<verse number="13">ಯೆಹೋವ ದೇವರೇ, ನಮ್ಮ ದೇವರೇ, ನಿಮ್ಮ ಬದಲು ಬೇರೆ ಒಡೆಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದರು. ಆದರೆ ನಿಮ್ಮ ನಾಮವನ್ನು ಮಾತ್ರವೇ ನಾವು ಗೌರವಿಸುವೆವು.</verse>
				<verse number="14">ಈಗ ಅವರು ಸತ್ತಿದ್ದಾರೆ, ಅವರು ಬದುಕುವುದಿಲ್ಲ. ತೀರಿಹೋದ ಆ ಆತ್ಮಗಳು ಎದ್ದು ಬರುವುದಿಲ್ಲ. ನೀವು ಅವರನ್ನು ದಂಡಿಸಿ ಅಳಿಸಿಬಿಟ್ಟಿದ್ದೀರಿ. ಅವರ ನೆನಪೇ ಉಳಿಯದ ಹಾಗೆ ಮಾಡಿದ್ದೀರಿ.</verse>
				<verse number="15">ಜನಾಂಗವನ್ನು ಹೆಚ್ಚಿಸಿದ್ದೀರಿ. ಯೆಹೋವ ದೇವರೇ, ಜನಾಂಗವನ್ನು ಹೆಚ್ಚಿಸಿದ್ದೀರಿ. ನೀವು ಮಹಿಮೆ ಹೊಂದಿದ್ದೀರಿ. ನೀವು ದೇಶದ ಮೇರೆಗಳನ್ನೆಲ್ಲಾ ಭೂಮಿಯ ಕಟ್ಟಕಡೆಯವರೆಗೂ ವಿಸ್ತರಿಸಿದ್ದೀರಿ.</verse>
				<verse number="16">ಯೆಹೋವ ದೇವರೇ, ಇಕ್ಕಟ್ಟಿನಲ್ಲಿ ಅವರು ನಿಮ್ಮನ್ನು ಹುಡುಕಿದರು. ನಿಮ್ಮ ಶಿಕ್ಷೆ ಅವರ ಮೇಲಿರುವಾಗ, ಅವರು ಪ್ರಾರ್ಥನೆಯನ್ನು ಮಾಡಿದರು.</verse>
				<verse number="17">ಗರ್ಭಿಣಿ ಸ್ತ್ರೀಯು ಹೆರುವುದಕ್ಕೆ ಸಮೀಪ ಬಂದಾಗ ನೋವಿನಲ್ಲಿದ್ದು ತನ್ನ ಬೇನೆಯಲ್ಲಿ ಅರಚುವಂತೆ, ಯೆಹೋವ ದೇವರೇ, ನಾವು ನಿಮ್ಮ ಸಮ್ಮುಖದಲ್ಲಿದ್ದೆವು.</verse>
				<verse number="18">ನಾವು ಗರ್ಭಧರಿಸಿ, ವೇದನೆಪಟ್ಟು ಗಾಳಿಯನ್ನು ಹೆತ್ತಂತಾಯಿತು. ಭೂಮಿಗೆ ನಮ್ಮಿಂದ ಯಾವ ಬಿಡುಗಡೆಯೂ ಆಗಲಿಲ್ಲ. ಭೂಲೋಕದ ಜನರಿಗೆ ಜನ್ಮ ಕೊಡಲಿಲ್ಲ.</verse>
				<verse number="19">ಆದರೆ ಮೃತರಾದ ನಿನ್ನ ಜನರು ಬದುಕುವರು. ಅವರ ದೇಹಗಳು ಏಳುವುವು. ಧೂಳಿನ ನಿವಾಸಿಗಳೇ, ಎಚ್ಚೆತ್ತು ಹರ್ಷಧ್ವನಿಗೈಯಿರಿ! ಯೆಹೋವ ದೇವರೇ, ನಿಮ್ಮ ಇಬ್ಬನಿ ಮುಂಜಾನೆಯ ಇಬ್ಬನಿಯಂತಿರುವುದು. ಭೂಮಿಯು ಸತ್ತವರನ್ನು ಹೊರಪಡಿಸುವುದು.</verse>
				<verse number="20">ನನ್ನ ಜನರೇ, ಹೋಗಿರಿ. ನಿಮ್ಮ ಕೋಣೆಗಳಲ್ಲಿ ಸೇರಿ, ಬಾಗಿಲನ್ನು ಮುಚ್ಚಿಕೊಳ್ಳಿರಿ. ಸ್ವಲ್ಪ ಹೊತ್ತು ರೋಷವು ಹಾದುಹೋಗುವ ತನಕ ಅಡಗಿಕೊಂಡಿರಿ.</verse>
				<verse number="21">ಭೂನಿವಾಸಿಗಳ ದುಷ್ಕೃತ್ಯಕ್ಕೆ ಶಿಕ್ಷಿಸುವುದಕ್ಕೆ ಯೆಹೋವ ದೇವರು ತಮ್ಮ ಸ್ಥಳದಿಂದ ಹೊರಟಿದ್ದಾರೆ. ಭೂಮಿಯು ಸಹ ತನ್ನಲ್ಲಿ ಕೊಂದುಹಾಕಿದವರನ್ನು ಇನ್ನು ಮುಚ್ಚಿಕೊಳ್ಳದೆ, ತನ್ನಲ್ಲಿರುವ ರಕ್ತಾಪರಾಧವನ್ನು ಪ್ರಕಟ ಮಾಡುವುದು.</verse>
			</chapter>
			<chapter number="27">
				<verse number="1">ಆ ದಿನದಲ್ಲಿ ಯೆಹೋವ ದೇವರು, ತಮ್ಮ ಬಲವಾದ ಭೀಕರ ಖಡ್ಗದಿಂದ ವೇಗವಾಗಿ ಓಡುವ ಲೆವಿಯಾತಾನ ಸರ್ಪವನ್ನೂ, ಡೊಂಕಾಗಿ ಹರಿಯುವ ಲೆವಿಯಾತಾನ ಸರ್ಪವನ್ನೂ ದಂಡಿಸಿ, ಸಮುದ್ರದಲ್ಲಿರುವ ಘಟಸರ್ಪವನ್ನೂ ಕೊಂದುಹಾಕುವರು.</verse>
				<verse number="2">ಆ ದಿನದಲ್ಲಿ, ಫಲಭರಿತ ದ್ರಾಕ್ಷಿತೋಟದ ವಿಷಯವಾಗಿ ಹಾಡಿರಿ.</verse>
				<verse number="3">ಯೆಹೋವ ದೇವರಾದ ನಾನೇ ಅದನ್ನು ಕಾಯುತ್ತೇನೆ. ಸತತವಾಗಿ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ. ಯಾರೂ ಅದಕ್ಕೆ ಕೇಡು ಮಾಡದ ಹಾಗೆ ರಾತ್ರಿ ಹಗಲು ಅದನ್ನು ಕಾಯುತ್ತೇನೆ.</verse>
				<verse number="4">ರೌದ್ರವು ನನ್ನಲ್ಲಿ ಇಲ್ಲ. ಯಾವನಾದರೂ ಮುಳ್ಳು ದತ್ತೂರಿಗಳನ್ನು ನನಗೆ ವಿರೋಧವಾಗಿ ಯುದ್ಧಕ್ಕೆ ಇಟ್ಟರೆ, ನಾನು ಅವುಗಳನ್ನು ಹಾದು ಹೋಗಿ, ಅವುಗಳನ್ನು ಒಟ್ಟಿಗೆ ಸುಡುವೆನು.</verse>
				<verse number="5">ಇಲ್ಲದಿದ್ದರೆ ಅವರು ನನ್ನ ಸಂಗಡ ಸಮಾಧಾನಮಾಡಿಕೊಳ್ಳುವ ಹಾಗೆ ನನ್ನನ್ನು ಆಶ್ರಯಿಸಲಿ, ನನ್ನೊಡನೆ ಸಮಾಧಾನ ಮಾಡಿಕೊಳ್ಳಲಿ.</verse>
				<verse number="6">ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು. ಇಸ್ರಾಯೇಲು ಹೂ ಅರಳಿ ಚಿಗುರುವುದು. ಭೂಲೋಕವನ್ನೆಲ್ಲಾ ಫಲದಿಂದ ತುಂಬಿಸುವನು.</verse>
				<verse number="7">ಆಕೆಯನ್ನು ಹೊಡೆದವರನ್ನು ಆತನು ಹೊಡೆದಂತೆ ಯೆಹೋವ ದೇವರು ಆಕೆಯನ್ನು ಹೊಡೆದರೋ? ಆಕೆಯನ್ನು ಕೊಂದವರು ಹತರಾದಂತೆ ಆಕೆಯು ಸಂಹಾರವಾದಳೋ?</verse>
				<verse number="8">ಯುದ್ಧದಿಂದಲೂ ಸೆರೆಯಿಂದಲೂ ಆಕೆಯೊಂದಿಗೆ ತೃಪ್ತರಾಗಿರಿ. ಆತನು ತನ್ನ ಕೋಪದ ಪೆಟ್ಟಿನಿಂದ ಪೂರ್ವದ ಬಿರುಗಾಳಿ ಬೀಸುವಾಗ ಆಗುವಂತೆ, ಆಕೆಯನ್ನು ಹೊರಗೋಡಿಸುವನು.</verse>
				<verse number="9">ಹೀಗಿರುವದರಿಂದ ಯಾಕೋಬನು ಬಲಿಪೀಠಗಳ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿಪುಡಿಮಾಡಿ, ಅಶೇರ ಸ್ತಂಭಗಳನ್ನೂ ಧೂಪವೇದಿಗಳನ್ನೂ ಇನ್ನು ಪ್ರತಿಷ್ಠಾಪಿಸದೆ ಹೋದರೆ ಅದೇ ಯಾಕೋಬನ ಅಪರಾಧಕ್ಕೆ ಪ್ರಾಯಶ್ಚಿತ್ತವಾಗುವುದು ಮತ್ತು ಅವನ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲವು ಇದೇ ಆಗಿದೆ.</verse>
				<verse number="10">ಕೋಟೆಯ ಪಟ್ಟಣವು ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸ ಸ್ಥಾನವಾಗುವುದು. ಅಲ್ಲಿ ದನಕರುಗಳು ಮೇದು ಮಲಗುವ ಗೋಮಾಳವಾಗಿದೆ. ಅವು ಅಲ್ಲಿನ ಚಿಗುರುಗಳನ್ನು ತಿಂದುಬಿಡುವುವು.</verse>
				<verse number="11">ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗಿವೆ. ಸ್ತ್ರೀಯರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು. ಏಕೆಂದರೆ ಇದು ವಿವೇಕವಿಲ್ಲದ ಜನ. ಆದ್ದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವುದಿಲ್ಲ. ಅವರ ಸೃಷ್ಟಿಕರ್ತನು ಅವರನ್ನು ಕರುಣಿಸುವುದಿಲ್ಲ.</verse>
				<verse number="12">ಇಸ್ರಾಯೇಲರೇ, ಯೆಹೋವ ದೇವರು ಯೂಫ್ರೇಟೀಸ್ ನದಿ ಮೊದಲುಗೊಂಡು ಈಜಿಪ್ಟ್ ದೇಶದ ನದಿಯವರೆಗೆ ಹೊಡೆಯುವರು, ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಕೂಡಿಸುವರು.</verse>
				<verse number="13">ಆ ದಿನದಲ್ಲಿ ದೊಡ್ಡ ತುತೂರಿಯು ಊದಲಾಗುವುದು. ಆಗ ಅಸ್ಸೀರಿಯ ದೇಶದಲ್ಲಿ ಚದರಿಹೋದವರೂ, ಈಜಿಪ್ಟ್ ದೇಶದಲ್ಲಿ ಗಡೀಪಾರಾದವರೂ, ಯೆರೂಸಲೇಮಿನ ಪರಿಶುದ್ಧ ಪರ್ವತದ ಬಳಿಗೆ ಬಂದು ಯೆಹೋವ ದೇವರನ್ನು ಆರಾಧಿಸುವರು.</verse>
			</chapter>
			<chapter number="28">
				<verse number="1">ಕುಡುಕರಿಂದ ಕೂಡಿದ ಎಫ್ರಾಯೀಮಿನ ಕಿರೀಟದಂತಿರುವ ನಗರಕ್ಕೆ ಕಷ್ಟ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು, ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಕಷ್ಟ!</verse>
				<verse number="2">ಇಗೋ, ಕರ್ತರಿಗೆ ಒಬ್ಬ ಮಹಾ ಬಲಿಷ್ಠನು ಇದ್ದಾನೆ. ಅವನು ರಭಸವಾಗಿ ಸುರಿಯುವ ಕಲ್ಮಳೆಯಂತೆಯೂ, ಹೊಡೆದು ಬಿಡುವ ಬಿರುಗಾಳಿಯಂತೆಯೂ, ಪ್ರಳಯ ಮಾಡುವ ದೊಡ್ಡ ನೀರನ್ನು ತರುವ ಬಿರುಗಾಳಿಯಂತೆಯೂ ಅದನ್ನು ಕೈಯಿಂದ ಬೀಳಿಸುವನು.</verse>
				<verse number="3">ಕುಡುಕರಾದ ಎಫ್ರಾಯೀಮ್ಯರ ಗರ್ವದ ಕಿರೀಟವು ಕಾಲಿನ ತುಳಿತಕ್ಕೆ ಈಡಾಗುವುದು.</verse>
				<verse number="4">ಫಲವತ್ತಾದ ಕಣಿವೆಗೆ ತಲೆಯ ಮೇಲಿರುವ ಅಲಂಕಾರದ ಶೃಂಗಾರವಾಗಿದ್ದು, ಬೇಸಿಗೆ ಮುಂಚೆ ಮಾಗಿದ ಅಂಜೂರದ ಹಣ್ಣಿನ ಹಾಗೆ ಇರುವುದು. ಜನರು ಅವರನ್ನು ನೋಡಿ ಕೈಗೆ ತೆಗೆದುಕೊಂಡ ತಕ್ಷಣ ಅವರು ನುಂಗುತ್ತಾರೆ.</verse>
				<verse number="5">ಆ ದಿನದಲ್ಲಿ ಸೇನಾಧೀಶ್ವರ ಯೆಹೋವ ದೇವರು ತನ್ನ ಜನರಲ್ಲಿ ಉಳಿದವರಿಗೆ ಮಹಿಮೆಯ ಕಿರೀಟವೂ ಮತ್ತು ಸುಂದರವಾದ ಮಕುಟವೂ ಆಗಿರುವರು.</verse>
				<verse number="6">ನ್ಯಾಯಕ್ಕೋಸ್ಕರ ಕೂತುಕೊಂಡವನಿಗೆ ನ್ಯಾಯದ ಆತ್ಮವೂ, ಬಾಗಿಲಿನ ಕಡೆಗೆ ಯುದ್ಧವನ್ನು ತಿರುಗಿಸುವವನಿಗೆ ಪರಾಕ್ರಮವೂ ಆಗಿರುವನು.</verse>
				<verse number="7">ಇವರು ಸಹ ದ್ರಾಕ್ಷಾರಸದಿಂದ ಮತ್ತರಾಗಿದ್ದಾರೆ. ಮದ್ಯದಿಂದಲೂ ಓಲಾಡುತ್ತಿದ್ದಾರೆ. ಯಾಜಕನೂ ಪ್ರವಾದಿಯೂ ಮದ್ಯದಿಂದ ಮತ್ತರಾಗಿದ್ದಾರೆ. ದ್ರಾಕ್ಷಾರಸದಿಂದ ತೂರಾಡುತ್ತಿದ್ದಾರೆ. ಮದ್ಯದಿಂದ ಓಲಾಡುತ್ತಿದ್ದಾರೆ. ದರ್ಶನವಾಗುತ್ತಿರುವಾಗಲೂ ಅವರು ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ.</verse>
				<verse number="8">ಮೇಜುಗಳೆಲ್ಲಾ ಸ್ಥಳ ಉಳಿಯದ ಹಾಗೆ ಅಸಹ್ಯವಾದ ಕಕ್ಕುವಿಕೆಯಿಂದ ತುಂಬಿವೆ.</verse>
				<verse number="9">ಈತನು ಯಾರಿಗೆ ಜ್ಞಾನವನ್ನು ಬೋಧಿಸುತ್ತಾನೆ? ಮತ್ತು ಯಾರಿಗೆ ಬೋಧನೆಯನ್ನು ತಿಳಿದುಕೊಳ್ಳುವ ಹಾಗೆ ಮಾಡುತ್ತಾನೆ? ಆಗತಾನೇ ಹಾಲು ಬಿಟ್ಟ ಕೂಸುಗಳಿಗೋ, ಎಳೆಯ ಮಕ್ಕಳಿಗೋ?</verse>
				<verse number="10">ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ.</verse>
				<verse number="11">ತೊದಲು ಮಾತಿನವರು, ಅನ್ಯಭಾಷಿಗಳು ಇವರ ಮೂಲಕವಾಗಿಯೇ ಆತನು ಈ ಜನರೊಡನೆ ಮಾತನಾಡುತ್ತಾನೆ.</verse>
				<verse number="12">ಆತನು ಮೊದಲು, “ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ, ಬಳಲಿದವರನ್ನು ವಿಶ್ರಮಗೊಳಿಸಿರಿ. ನಿಮಗೆ ಅನುಕೂಲವಾದ ಉಪಶಮನ ಇದೇ,” ಎಂದು ಹೇಳಿದಾಗಲೂ ಅವರು ಕೇಳಲಿಲ್ಲ.</verse>
				<verse number="13">ಆಗ ಯೆಹೋವ ದೇವರು ಅವರಿಗೆ ಹೀಗೆ ಹೇಳಿದರು: ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಇದರಿಂದ ಅವರು ಎಡವಿಬಿದ್ದು ಗಾಯಗೊಳ್ಳಬಹುದು. ಮತ್ತು ಬಲೆಯಲ್ಲಿ ಸಿಕ್ಕಿ ಬೀಳುವರು.</verse>
				<verse number="14">ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನರನ್ನು ಆಳುವ ಹಾಸ್ಯದ ಜನರಾದ ನೀವು ಯೆಹೋವ ದೇವರ ಮಾತನ್ನು ಕೇಳಿರಿ.</verse>
				<verse number="15">“ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ. ವಿಪರೀತವಾದ ಶಿಕ್ಷೆಯು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು; ನಮ್ಮ ಅಸತ್ಯವನ್ನು ಆಶ್ರಯವಾಗಿ ಮಾಡಿಕೊಂಡು, ಮೋಸದಲ್ಲಿ ಅಡಗಿಕೊಂಡಿದ್ದೇವೆ,” ಎನ್ನುತ್ತೀರಲ್ಲಾ?</verse>
				<verse number="16">ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪರೀಕ್ಷಿತವಾಗಿಯೂ, ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಅಸ್ತಿವಾರವನ್ನಾಗಿ ಇಡುತ್ತೇನೆ. ಭರವಸೆ ಇಡುವವನು ಆತುರಪಡನು.</verse>
				<verse number="17">ನಾನು ನ್ಯಾಯವನ್ನು ಅಳತೆಗೋಲನ್ನಾಗಿಯೂ ಮತ್ತು ನೀತಿಯನ್ನು ಮಟ್ಟಗೋಲನ್ನಾಗಿಯೂ ಮಾಡುವೆನು. ಕಲ್ಮಳೆಯು ಸುಳ್ಳಿನ ಆಶ್ರಯವನ್ನು ಬಡಿದುಕೊಂಡು ಹೋಗುವುದು. ಅಡಗುವ ಸ್ಥಾನವನ್ನು ಜಲಪ್ರವಾಹವು ಮುಳುಗಿಸಿ ಬಿಡುವುದು.</verse>
				<verse number="18">ಮರಣದೊಂದಿಗೆ ನೀವು ಮಾಡಿಕೊಂಡ ಒಡಂಬಡಿಕೆ ರದ್ದಾಗುವುದು. ಪಾತಾಳದ ಸಂಗಡ ನೀವು ಮಾಡಿಕೊಂಡ ಒಪ್ಪಂದವು ನಿಲ್ಲುವುದಿಲ್ಲ. ವಿಪರೀತ ಬಾಧೆಯು ಹಾದುಹೋಗುವಾಗ ನಿಮ್ಮನ್ನು ತುಳಿದುಹಾಕುವುದು.</verse>
				<verse number="19">ಅದು ಹಾದುಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವುದು. ಏಕೆಂದರೆ ಅದು ಹೊತ್ತಾರೆಯಿಂದ ಹೊತ್ತಾರೆಗೆ, ಹಗಲು ರಾತ್ರಿಯೂ ಹಾದುಹೋಗುವುದು.” ಆಗ ದೇವರ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.</verse>
				<verse number="20">ಮೈ ಚಾಚುವುದಕ್ಕೆ ಹಾಸಿಗೆ ಚಿಕ್ಕದಾಗಿರುವುದು. ಮುದುರಿಕೊಂಡು ಮಲಗುವುದಕ್ಕೆ, ಹೊದಿಕೆಯ ಅಗಲ ಸಾಲದು.</verse>
				<verse number="21">ಯೆಹೋವ ದೇವರು ಪೆರಾಚೀಮ್ ಪರ್ವತದಲ್ಲಿ ಎದ್ದಂತೆ ಏಳುವರು. ಹಾಗೆ ಎದ್ದು ಗಿಬ್ಯೋನ್ ತಗ್ಗಿನಲ್ಲಿ ಆದ ಹಾಗೆ ಕೋಪಿಸಿ, ಅಪರೂಪವಾದ ತಮ್ಮ ಕೆಲಸವನ್ನು ನಡಿಸಿ, ಅಪೂರ್ವವಾದ ತಮ್ಮ ಕಾರ್ಯವನ್ನು ನೆರವೇರಿಸುವನು.</verse>
				<verse number="22">ಹೀಗಿರುವುದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗಬೇಡಿರಿ. ಸರ್ವಶಕ್ತ ಆಗಿರುವ ಕರ್ತ ಯೆಹೋವ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರ ತರಲು ನಿರ್ಣಯಿಸಿದೆ, ಎಂಬ ತೀರ್ಪನ್ನು ನಾನು ಕೇಳಿದ್ದೇನೆ.</verse>
				<verse number="23">ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ, ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ.</verse>
				<verse number="24">ಬಿತ್ತನೆಗಾಗಿ ಉಳುವವನು ಹಗಲೆಲ್ಲಾ ಉಳುತ್ತಿರುವನೋ? ತನ್ನ ಭೂಮಿಯ ಮಣ್ಣುಹೆಂಟೆಯನ್ನು ತೆಗೆದು, ದಿನವೆಲ್ಲಾ ಹೊಡೆಯುವನೋ?</verse>
				<verse number="25">ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ ಅಗಸೆಯನ್ನು ಚೆಲ್ಲಿ, ಜೀರಿಗೆಯನ್ನು ಚದರಿಸಿ ಮತ್ತು ಗೋಧಿಯನ್ನು ಸಾಲುಸಾಲಾಗಿಯೂ, ಜವೆಗೋಧಿಯನ್ನು ನೇಮಕವಾದ ಸ್ಥಳದಲ್ಲಿಯೂ, ಕಡಲೆಯನ್ನು ಅಂಚಿನಲ್ಲಿಯೂ ಹಾಕುವನಲ್ಲವೇ.</verse>
				<verse number="26">ಏಕೆಂದರೆ ಅವನ ದೇವರು ಅವನಿಗೆ ಸೂಚಿಸುತ್ತಾರೆ. ಮತ್ತು ಸರಿಯಾದ ಮಾರ್ಗವನ್ನು ಕಲಿಸುತ್ತಾರೆ.</verse>
				<verse number="27">ಅಗಸೆಯನ್ನು ತುಳಿಯುವ ಯಂತ್ರದಿಂದ ತುಳಿಯುವುದಿಲ್ಲ. ಜೀರಿಗೆಯನ್ನು ಒಕ್ಕುವುದು ಬಂಡಿಯ ಚಕ್ರ ತಿರುಗಿಸುವುದರಿಂದ ಅಲ್ಲ. ಅಗಸೆಯು ಕೋಲಿನಿಂದಲೂ, ಜೀರಿಗೆಯನ್ನು ಒಕ್ಕುವುದು ದೊಣ್ಣೆಯಿಂದ ಆಗಿರುತ್ತದೆ.</verse>
				<verse number="28">ರೊಟ್ಟಿಗಾಗಿ ಗೋಧಿಯ ಕಾಳನ್ನು ಪುಡಿಮಾಡಬೇಕು; ಯಾವಾಗಲೂ ಅದನ್ನು ಒಕ್ಕುತ್ತಿರುವುದಿಲ್ಲ. ಅವನ ಬಂಡಿಯ ಚಕ್ರದಿಂದ ಅದರ ಮೇಲೆ ಒಡೆಯುವುದಿಲ್ಲ ಅವನ ಕುದುರೆ ಸವಾರದಿಂದ ಒಕ್ಕುತ್ತಿರುವುದಿಲ್ಲ.</verse>
				<verse number="29">ಈ ವಿವೇಕವು ಸಹ ಅತಿಶಯ ಆಲೋಚನಾಪರರೂ, ಕಾರ್ಯಸಾಧಕ ಜ್ಞಾನ ಶ್ರೇಷ್ಠರೂ ಆಗಿರುವ ಸೇನಾಧೀಶ್ವರ ಯೆಹೋವ ದೇವರಿಂದಲೇ ಹೊರಡುತ್ತದೆ.</verse>
			</chapter>
			<chapter number="29">
				<verse number="1">ಅಯ್ಯೋ, ಅರೀಯೇಲೇ, ಅರೀಯೇಲೇ, ದಾವೀದನು ವಾಸಿಸಿದ ಪಟ್ಟಣವೇ! ವರುಷಕ್ಕೆ ವರುಷವನ್ನು ಕೂಡಿಸಿರಿ. ನಿಮ್ಮ ಹಬ್ಬಗಳ ಚಕ್ರ ಮುಂದುವರಿಯಲಿ.</verse>
				<verse number="2">ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ, ದುಃಖವೂ ಇರುವುದು. ಅವಳು ನನಗೆ ಬಲಿಪೀಠದ ಒಲೆಯಂತೆ ಇರುತ್ತಾಳೆ.</verse>
				<verse number="3">ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೋಟೆಗಳನ್ನು ಎಬ್ಬಿಸಿ, ದಿಬ್ಬ ಹಾಕಿ ನಿನ್ನ ಮೇಲೆ ಮುತ್ತಿಗೆ ಹಾಕುವೆನು.</verse>
				<verse number="4">ಆಗ ನೀನು ಕುಗ್ಗಿ ಭೂಮಿಯೊಳಗಿಂದ ಮಾತನಾಡುವಿ. ನಿನ್ನ ನುಡಿಯು ಧೂಳಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವುದು. ನಿನ್ನ ಸ್ವರವು ಭೂತದ ಹಾಗೆ ನೆಲದೊಳಗಿಂದ ಬರುವುದು. ನಿನ್ನ ನುಡಿಯು ಧೂಳಿನೊಳಗಿಂದ ಪಿಸುಗುಟ್ಟುವುದು.</verse>
				<verse number="5">ಅದೂ ಅಲ್ಲದೆ ನಿನ್ನ ವೈರಿಗಳ ಗುಂಪು ಸೂಕ್ಷ್ಮವಾದ ಧೂಳಿನಂತಾಗುವುದು. ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನ ಹಾಗೆ ಇರುವುದು. ಹೌದು, ಅದು ಕ್ಷಣಮಾತ್ರದಲ್ಲಿ ಫಕ್ಕನೆ ಆಗುವುದು.</verse>
				<verse number="6">ಸೇನಾಧೀಶ್ವರ ಯೆಹೋವ ದೇವರು ಗುಡುಗಿನಿಂದಲೂ, ಮಹಾಶಬ್ದದಿಂದಲೂ, ಬಿರುಗಾಳಿ ಸುಳಿಗಾಳಿಯಿಂದಲೂ, ದಹಿಸುವ ಅಗ್ನಿಜ್ವಾಲೆಯಿಂದಲೂ ಪ್ರತ್ಯಕ್ಷರಾಗುವರು.</verse>
				<verse number="7">ಅರೀಯೇಲಿನ ಮೇಲೆ ಹೋರಾಡಿ ಅದಕ್ಕೂ ಅದರ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ ಬಾಧಿಸುವ ಸಕಲ ಜನಾಂಗಗಳು ರಾತ್ರಿಯ ದರ್ಶನದ ಕನಸಿನಂತೆ ಮಾಯವಾಗುವುವು.</verse>
				<verse number="8">ಹಸಿದ ಮನುಷ್ಯನು ಕನಸು ಕಂಡು ಇಗೋ, ಉಣ್ಣುತ್ತೇನೆ ಎಂದುಕೊಂಡಂತಾಗುವುದು. ಆದರೆ ಅವನು ಎಚ್ಚೆತ್ತಾಗ ಪ್ರಾಣ ತುಂಬಿದ ಹಾಗೆಯೂ, ಬಾಯಾರಿದವನು ಸ್ವಪ್ನದಲ್ಲಿ ಇಗೋ, ಕುಡಿಯುತ್ತೇನೆ ಎಂದುಕೊಂಡಂತಾಗುವುದು. ಆದರೆ ಅವನು ಎಚ್ಚರವಾದಾಗ ಬಲಹೀನನಾಗಿದ್ದು, ಪ್ರಾಣ ಆಶಿಸುವ ಹಾಗೆಯೇ ಚೀಯೋನ್ ಪರ್ವತಕ್ಕೆ ವಿರೋಧವಾಗಿ ಯುದ್ಧಮಾಡುವ ಎಲ್ಲಾ ಜನಾಂಗಗಳ ಸಮೂಹವಿರುವುದು.</verse>
				<verse number="9">ತಾಮಸ ಮಾಡಿ ಆಶ್ಚರ್ಯಪಡಿರಿ. ಕುರುಡು ಮಾಡಿಕೊಂಡು ದೃಷ್ಟಿಯಿಲ್ಲದವರಾಗಿರಿ ಇವರು ಅಮಲೇರಿದ್ದಾರೆ. ಆದರೆ ದ್ರಾಕ್ಷಾರಸದಿಂದಲ್ಲ. ಅವರು ಕೂಗಾಡುತ್ತಾರೆ, ಆದರೆ ಮದ್ಯದಿಂದಲ್ಲ.</verse>
				<verse number="10">ಯೆಹೋವ ದೇವರು ನಿಮ್ಮ ಮೇಲೆ ಗಾಢನಿದ್ರೆಯ ಆತ್ಮವನ್ನು ಹೊಯ್ದು, ನಿಮ್ಮ ಕಣ್ಣುಗಳನ್ನು ಮುಚ್ಚಿದ್ದಾರೆ. ಪ್ರವಾದಿಗಳನ್ನೂ, ನಿಮ್ಮ ಮುಖ್ಯಸ್ಥರಾದ ದರ್ಶಿಗಳನ್ನು ಮುಚ್ಚಿದ್ದಾರೆ.</verse>
				<verse number="11">ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿದ ಗ್ರಂಥದ ವಾಕ್ಯಗಳ ಹಾಗಾಯಿತು. ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು, “ಇದನ್ನು ಓದು,” ಎಂದು ವಿನಂತಿಸಿದರೆ ಅವನು, “ಮುದ್ರೆ ಹಾಕಿದೆಯೆಲ್ಲಾ, ಆಗುವುದಿಲ್ಲ,” ಅನ್ನುವನು.</verse>
				<verse number="12">ಅಕ್ಷರವಿಲ್ಲದವನಿಗೆ ಆ ಪುಸ್ತಕವನ್ನು ಒಪ್ಪಿಸಿದರೆ ಅವನು ನನಗೆ ಓದಲು ಬರುವುದಿಲ್ಲ ಅನ್ನುವನು.</verse>
				<verse number="13">ಕರ್ತರು ಹೇಳುವುದೇನೆಂದರೆ: “ಈ ಜನರು ಬಾಯಿಂದ ನನ್ನನ್ನು ಸಮೀಪಿಸಿ, ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.</verse>
				<verse number="14">ಹೀಗಿರುವುದರಿಂದ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಇನ್ನೂ ಮಾಡುವೆನು. ಅವರ ಜ್ಞಾನಿಗಳ ಜ್ಞಾನವು ಅಳಿಯುವುದು. ಅವರ ವಿವೇಕಿಗಳ ವಿವೇಕವು ಅಡಗಿಕೊಳ್ಳುವುದು.”</verse>
				<verse number="15">ತಮ್ಮ ಆಲೋಚನೆಗಳನ್ನು ಯೆಹೋವ ದೇವರಿಗೆ ಮರೆಮಾಡುವುದಕ್ಕೆ ಅಗಾಧದಲ್ಲಿ ಹೋಗಿ, ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ತಿಳಿದಾರು? ಎಂದುಕೊಂಡು, ಕತ್ತಲೆಯಲ್ಲೇ ತಮ್ಮ ಕೆಲಸವನ್ನು ನಡಿಸುವವರಿಗೆ ಕಷ್ಟ!</verse>
				<verse number="16">ಖಂಡಿತವಾಗಿಯೂ ನೀವು ತಲೆಕೆಳಗೆ ಮಾಡುವ ಸಂಗತಿಗಳು, ಕುಂಬಾರನು ಜೇಡಿಮಣ್ಣಿನಂತೆ ಪರಿಗಣಿಸಲಾಗುವುದು! ಉಂಟುಮಾಡಿದವನಿಗೆ ಉಂಟುಮಾಡಿದ್ದು, “ನೀನು ನನ್ನನ್ನು ಉಂಟುಮಾಡಲಿಲ್ಲ,” ಎಂತಲೂ, ಮಡಕೆ ಕುಂಬಾರನಿಗೆ, “ನಿನಗೆ ಏನೂ ಗೊತ್ತಿಲ್ಲ,” ಎಂತಲೂ ಹೇಳಬಹುದೇ?</verse>
				<verse number="17">ಆದರೂ ಇನ್ನು ಸ್ವಲ್ಪಕಾಲದಲ್ಲಿ ಲೆಬನೋನ್ ಫಲವುಳ್ಳ ಹೊಲವಾಗಿದ್ದು, ಆ ಫಲವುಳ್ಳ ಹೊಲವು ಅಡವಿಯಾಗಿ ಎಣಿಸಲ್ಪಡುವುದಿಲ್ಲವೋ?</verse>
				<verse number="18">ಆ ದಿನದಲ್ಲಿ ಕಿವುಡರು ಗ್ರಂಥದ ಮಾತುಗಳನ್ನು ಕೇಳುವರು ಮತ್ತು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ, ಅಂಧಕಾರದೊಳಗಿಂದಲೂ ಕಾಣುವುವು.</verse>
				<verse number="19">ದೀನರ ಸಂತೋಷವು ಯೆಹೋವ ದೇವರಲ್ಲಿ ಹೆಚ್ಚಾಗುವುವು. ಮನುಷ್ಯರಲ್ಲಿ ಬಡವರು ಇಸ್ರಾಯೇಲಿನ ಪರಿಶುದ್ಧನಲ್ಲಿ ಹರ್ಷಿಸುವರು.</verse>
				<verse number="20">ಭಯಂಕರನು ಇಲ್ಲವಾಗುತ್ತಾನೆ. ಅಪಹಾಸ್ಯ ಮಾಡುವವರು ಕಣ್ಮರೆಯಾಗುತ್ತಾರೆ. ಕೇಡಿಗೆ ಕಾಯುವವರೆಲ್ಲರೂ ನಾಶವಾಗುತ್ತಾರೆ.</verse>
				<verse number="21">ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.</verse>
				<verse number="22">ಆದ್ದರಿಂದ ಅಬ್ರಹಾಮನನ್ನು ವಿಮೋಚಿಸಿದ ಯೆಹೋವ ದೇವರು ಯಾಕೋಬಿನ ಮನೆತನದ ವಿಷಯವಾಗಿ ಹೇಳುವುದೇನೆಂದರೆ, “ಈಗ ಯಾಕೋಬ್ಯರು ನಾಚಿಕೆಪಡುವುದಿಲ್ಲ. ಅವನ ಮುಖವು ಕಳೆಗುಂದುವುದಿಲ್ಲ.</verse>
				<verse number="23">ಆದರೆ ನನ್ನ ಕೈಕೆಲಸವಾದ ಅವನ ಮಕ್ಕಳನ್ನು ತನ್ನ ಮಧ್ಯದಲ್ಲಿ ಕಾಣುವಾಗ ನನ್ನ ನಾಮವನ್ನು ಪರಿಶುದ್ಧವೆಂದೆಣಿಸಿ, ಯಾಕೋಬಿನ ಪರಿಶುದ್ಧನನ್ನು ಪ್ರತಿಷ್ಠಿಸುವರು, ಇಸ್ರಾಯೇಲಿನ ದೇವರಿಗೆ ಭಯಪಡುವರು.</verse>
				<verse number="24">ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗೊಣಗುಟ್ಟುವವರು ಬೋಧನೆ ಕಲಿಯುವರು.”</verse>
			</chapter>
			<chapter number="30">
				<verse number="1">“ದ್ರೋಹಿಗಳಾದ ಮಕ್ಕಳಿಗೆ ಕಷ್ಟ!” ಎಂದು ಯೆಹೋವ ದೇವರು ಹೇಳುತ್ತಾರೆ. ಅವರು ಆಲೋಚನೆಯನ್ನು ಮಾಡುತ್ತಾರೆ ಆದರೆ ನನ್ನಿಂದಲ್ಲ. ನನ್ನ ಆತ್ಮ ಪ್ರೇರಿತರಾಗದೆ ಉಪಾಯಗಳನ್ನು ಮಾಡುತ್ತಾರೆ, ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ.</verse>
				<verse number="2">ಫರೋಹನಲ್ಲಿ ತಾವು ಬಲಗೊಳ್ಳುವ ಆಶ್ರಯವನ್ನು ಈಜಿಪ್ಟಿನ ನೆರಳಿನಲ್ಲಿ ಭರವಸವಿಡಬೇಕೆಂದು ನನ್ನ ಮಾತನ್ನು ಕೇಳದೆ, ಈಜಿಪ್ಟಿಗೆ ಪ್ರಯಾಣವಾಗಿ ಹೊರಟಿದ್ದಾರೆ.</verse>
				<verse number="3">ಆದರೆ ಫರೋಹನ ಆಶ್ರಯದಿಂದ ನಿಮಗೆ ನಾಚಿಕೆಯೂ, ಈಜಿಪ್ಟ್ ನೆರಳಿನ ಭರವಸೆಯಿಂದ ನಿಮಗೆ ನಿಂದೆಯೂ ಉಂಟಾಗುವುದು.</verse>
				<verse number="4">ಏಕೆಂದರೆ ಅವನ ಪ್ರಧಾನರು ಚೋವನಿನಲ್ಲಿ ಇದ್ದರು. ಅವನ ರಾಯಭಾರಿಗಳು ಹಾನೇಸಿಗೆ ಬಂದಿದ್ದಾರೆ.</verse>
				<verse number="5">ತಮಗೆ ಪ್ರಯೋಜನವಾಗದೆ ಸಹಾಯಕ್ಕೂ, ಪ್ರಯೋಜನಕ್ಕೂ ಅಲ್ಲ. ನಿಂದೆಗೂ, ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ.</verse>
				<verse number="6">ನೆಗೆವಿನ ಮೃಗಗಳ ವಿಷಯವಾದ ಪ್ರವಾದನೆ: ಇಕ್ಕಟ್ಟಾದ ಶ್ರಮೆಯುಳ್ಳ ದೇಶಕ್ಕೆ ಪ್ರಾಯ ಮತ್ತು ಮುದಿ ಸಿಂಹವೂ, ಸರ್ಪವೂ, ಹಾರುವ ಉರಿಮಂಡಲ ಸರ್ಪವೂ ಬರುವಲ್ಲಿಗೆ ಅವರು ಕತ್ತೆಮರಿಗಳ ಬೆನ್ನ ಮೇಲೆ ತಮ್ಮ ಬದುಕನ್ನೂ, ಒಂಟೆಗಳ ಮೇಲೆ ತಮ್ಮ ದ್ರವ್ಯಗಳನ್ನು ತಮಗೆ ಪ್ರಯೋಜನವಿಲ್ಲದ ಜನಕ್ಕೆ ತೆಗೆದುಕೊಂಡು ಹೋಗುತ್ತಾರೆ.</verse>
				<verse number="7">ಏಕೆಂದರೆ ಈಜಿಪ್ಟಿನವರ ಸಹಾಯವು ವ್ಯರ್ಥವೇ ವ್ಯರ್ಥ. ಆದ್ದರಿಂದ ನಾನು ಅವಳಿಗೆ ಇದನ್ನು ಕುರಿತು ಅವರ ಬಲವು ನಿಂತು ಹೋಗಿದೆ ಎಂದು ನಾನು ಕೂಗಿದ್ದೇನೆ.</verse>
				<verse number="8">ಈಗ ಹೋಗಿ ಇದನ್ನು ಅದರ ಮುಂದೆ ಹಲಗೆಯಲ್ಲಿ ಬರೆ. ಅದನ್ನು ಸುರುಳಿಯಲ್ಲಿ ಬರೆಯಿರಿ, ಮುಂದೆ ಬರುವ ನಿತ್ಯಕಾಲಕ್ಕಾಗಿ ಶಾಶ್ವತ ಸಾಕ್ಷಿಯಾಗಿರಲಿ.</verse>
				<verse number="9">ಏನೆಂದರೆ ಇವರು ತಿರುಗಿಬೀಳುವ ಜನರೇ. ಸುಳ್ಳಾಡುವ ಮಕ್ಕಳು. ಯೆಹೋವ ದೇವರ ಉಪದೇಶಕ್ಕೆ ಕಿವಿಗೊಡದ ಮಕ್ಕಳೇ.</verse>
				<verse number="10">ಅವರು ನೋಡುವವರಿಗೆ, “ನೋಡಬೇಡಿರಿ,” ಎಂದು ಪ್ರವಾದಿಗಳಿಗೆ, “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ, ನಮಗೆ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ. ನಯವಾದವುಗಳನ್ನೇ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.</verse>
				<verse number="11">“ನಿಮ್ಮ ದಾರಿಗೆ ಓರೆಯಾಗಿರಿ, ಮಾರ್ಗದಿಂದ ತೊಲಗಿರಿ. ಇಸ್ರಾಯೇಲರ ಪರಿಶುದ್ಧನನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ,” ಎಂದು ಹೇಳುತ್ತಾರೆ.</verse>
				<verse number="12">ಆದಕಾರಣ ಇಸ್ರಾಯೇಲರ ಪರಿಶುದ್ಧನು ಹೇಳುವುದೇನೆಂದರೆ, “ನೀವು ಈ ಮಾತನ್ನು ತಿರಸ್ಕಾರ ಮಾಡಿ ಬಲಾತ್ಕಾರ, ಕುಯುಕ್ತಿಗಳನ್ನು ನಂಬಿ, ಅವುಗಳನ್ನೇ ಆಧಾರ ಮಾಡಿಕೊಂಡದ್ದರಿಂದ</verse>
				<verse number="13">ಎತ್ತರವಾದ ಗೋಡೆಯ ಒಂದು ಭಾಗವು ಉಬ್ಬಿಕೊಂಡು ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿ ಬೀಳುವ ಹಾಗೆ ನಿಮ್ಮ ಅಪರಾಧವು ನಿಮಗೆ ಅಪಾಯಕರವಾಗಿರುವುದು.</verse>
				<verse number="14">ಒಲೆಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ, ಬಾವಿಯಿಂದ ನೀರನ್ನು ತೆಗೆಯುವುದಕ್ಕಾಗಲಿ, ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ಒಡೆದುಬಿಡುವನು.”</verse>
				<verse number="15">ಏಕೆಂದರೆ ಇಸ್ರಾಯೇಲಿನ ಪರಿಶುದ್ಧನಾದ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, “ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು. ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, ನೀವು ಒಪ್ಪಿಕೊಂಡಿಲ್ಲ.</verse>
				<verse number="16">ಆದರೆ ನೀವು, ‘ಬೇಡವೇ ಬೇಡ. ಏಕೆಂದರೆ ನಾವು ಕುದುರೆಗಳ ಮೇಲೆ ಓಡುವೆವು,’ ಎಂದುಕೊಂಡಿದ್ದರಿಂದ ನೀವು ಓಡಿಹೋಗುವಿರಿ, ನಾವು ವೇಗವಾಗಿ ಸವಾರಿ ಮಾಡುವೆವು, ಎಂದುಕೊಂಡಿದ್ದರಿಂದ ಆ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು.</verse>
				<verse number="17">ಒಬ್ಬನ ಬೆದರಿಕೆಗೆ ಸಾವಿರ ಜನರು ಓಡುವರು, ಐವರು ಹೆದರಿಸುವುದರಿಂದ ನೀವೆಲ್ಲರೂ ಓಡಿಹೋಗುವಿರಿ, ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಣ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.”</verse>
				<verse number="18">ಹೀಗಿರಲು ಯೆಹೋವ ದೇವರು ನಿಮಗೆ ಕೃಪೆಯನ್ನು ತೋರಿಸಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತವಾಗಿ ಕಾಣಿಸಿಕೊಳ್ಳುವನು. ಏಕೆಂದರೆ ಯೆಹೋವ ದೇವರು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.</verse>
				<verse number="19">ಏಕೆಂದರೆ, ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳಬೇಕಾಗಿಲ್ಲ. ನೀವು ಕೂಗಿ ದುಃಖಿಸಿದ ಶಬ್ದವನ್ನು ದೇವರು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವರು. ದೇವರು ನಿಮ್ಮ ಸ್ವರವನ್ನು ಕೇಳಿದ ಕೂಡಲೇ ಸದುತ್ತರವನ್ನು ದಯಪಾಲಿಸುವರು.</verse>
				<verse number="20">ಕರ್ತದೇವರು ನಿಮಗೆ ಕಷ್ಟವನ್ನು, ಶ್ರಮೆಯನ್ನು, ಅನ್ನಪಾನಗಳನ್ನಾಗಿ ಕೊಟ್ಟರೂ, ಇನ್ನೂ ನಿಮ್ಮ ಬೋಧಕರು ನಮಗೆ ಮರೆಯಾಗಿ ಇರುವುದಿಲ್ಲ. ಆದರೆ ನಿನ್ನ ಕಣ್ಣುಗಳು ನಿಮ್ಮ ಬೋಧಕರನ್ನು ನೋಡುತ್ತಿರುವುವು.</verse>
				<verse number="21">ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ ಇದರಲ್ಲೇ ನಡೆಯಿರಿ,” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು.</verse>
				<verse number="22">ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನೂ ನೀವು ಹೊಲಸ್ಸಾಗಿ ಭಾವಿಸಿ, ಆ ವಿಗ್ರಹಕ್ಕೆ, “ತೊಲಗಿಹೋಗು,” ಎಂದು ಹೇಳಿ, ಅದನ್ನು ಹೊಲೆಯ ಬಟ್ಟೆಯಂತೆ ಬಿಸಾಡಿ ಬಿಡುವಿರಿ.</verse>
				<verse number="23">ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸುವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.</verse>
				<verse number="24">ಹೊಲಗೆಯ್ಯುವ ನಿಮ್ಮ ಎತ್ತು ಕತ್ತೆಗಳು ಮೊರದಿಂದಲೂ, ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವುವು.</verse>
				<verse number="25">ಮಹಾ ಸಂಹಾರದ ದಿವಸದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು ನೀರಿನ ಕಾಲುವೆಗಳೂ ಹರಿಯುತ್ತಿರುವುವು.</verse>
				<verse number="26">ಇಷ್ಟೇ ಅಲ್ಲದೆ ಯೆಹೋವ ದೇವರು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ, ಏಳು ದಿನಗಳ ಬೆಳಕಿನಂತಾಗುವುದು.</verse>
				<verse number="27">ಇಗೋ, ಯೆಹೋವ ದೇವರ ನಾಮವು ದೂರದಿಂದ ಬರುತ್ತದೆ. ಆತನ ಕೋಪವು ಉರಿಯುತ್ತದೆ. ಅದರಿಂದೇಳುವ ಹೊಗೆಯು ದಟ್ಟವಾಗಿದೆ. ಆತನ ತುಟಿಗಳು ರೋಷದಿಂದ ತುಂಬಿವೆ. ಆತನ ನಾಲಿಗೆಯು ದಹಿಸುವ ಅಗ್ನಿಯಂತಿದೆ.</verse>
				<verse number="28">ಆತನ ಶ್ವಾಸವು ತುಂಬುತ್ತಾ, ಕಂಠದವರೆಗೂ ಏರುವ ತೊರೆಯಂತಿದೆ. ಜನಾಂಗಗಳನ್ನು ಏನೂ ಉಳಿಸದ ಜರಡಿಯಿಂದ ಜಾಲಿಸುವುದಕ್ಕೆ ಬರುತ್ತಾನೆ. ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆಗಳಲ್ಲಿರುವುದು.</verse>
				<verse number="29">ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಆದಂತೆ ನಿಮಗೆ ಹಾಡು ಇರುವುದು. ಯೆಹೋವ ದೇವರ ಪರ್ವತವಾಗಿರುವ ಇಸ್ರಾಯೇಲಿನ ಬಂಡೆಯ ಬಳಿಗೆ ಕೊಳಲಿನ ಸಂಗಡ ಹೋಗುವ ಪ್ರಕಾರ ಹೃದಯದ ಸಂತೋಷವಿರುವುದು.</verse>
				<verse number="30">ಆಗ ಯೆಹೋವ ದೇವರು ತನ್ನ ಗಂಭೀರವಾದ ಧ್ವನಿಯನ್ನು ಕೇಳ ಮಾಡಿ, ತೀವ್ರ ಕೋಪ, ದಹಿಸುವ ಅಗ್ನಿ ಜ್ವಾಲೆ, ಪ್ರಳಯ, ಬಿರುಗಾಳಿ, ಕಲ್ಮಳೆ, ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.</verse>
				<verse number="31">ಯೆಹೋವ ದೇವರು ದಂಡದಿಂದ ದಂಡಿಸುವಾಗ, ಅಸ್ಸೀರಿಯವು ಆತನ ಧ್ವನಿಯಿಂದಲೇ ಮುರಿದು ಹೋಗುವುದು.</verse>
				<verse number="32">ಯೆಹೋವ ದೇವರು ಅದರ ಮೇಲೆ ತರುವಂಥ ನೇಮಿಸಿದ ದಂಡವು ಹಾದು ಹೋಗುವಲ್ಲೆಲ್ಲಾ ಅದು ದಮ್ಮಡಿ, ಕಿನ್ನರಿಗಳ ಸಂಗಡ ಇರುವುದು. ಆತನು ಅವರೊಂದಿಗೆ ಯುದ್ಧಗಳಲ್ಲಿ ಹೋರಾಡುತ್ತಾ ಕೈಬೀಸಿ ಯುದ್ಧಮಾಡುವನು.</verse>
				<verse number="33">ಪೂರ್ವದಿಂದ ತೋಫೆತ್ ಸಿದ್ಧವಾಗಿದೆ. ಹೌದು, ಅದು ಆಳವಾಗಿಯೂ, ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಚಿತೆಯೊಳಗೆ ಬೆಂಕಿಯೂ, ಬಹಳ ಕಟ್ಟಿಗೆಯೂ ತುಂಬಿರುವುದು. ಯೆಹೋವ ದೇವರ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.</verse>
			</chapter>
			<chapter number="31">
				<verse number="1">ಸಹಾಯಕ್ಕಾಗಿ ಈಜಿಪ್ಟನ್ನು ಸೇರಿ, ಅಶ್ವಬಲವನ್ನು, ಆಶ್ರಯಿಸುವವರಿಗೆ ಕಷ್ಟ! ಏಕೆಂದರೆ ರಥಗಳು ಬಹಳವೆಂದೂ, ಅವರ ನಂಬಿಕೆಯು ರಥಗಳ ಮೇಲೆ ಏಕೆಂದರೆ ಅವರು ಅನೇಕರು, ಆದರೆ ಇಸ್ರಾಯೇಲಿನ ಪರಿಶುದ್ಧನ ಮೇಲೆ ದೃಷ್ಟಿ ಇಡುವುದಿಲ್ಲ. ಇಲ್ಲವೆ ಯೆಹೋವ ದೇವರಿಂದ ಸಹಾಯವನ್ನು ಬಯಸುವುದಿಲ್ಲ.</verse>
				<verse number="2">ಆದರೂ ಅವರು ಜ್ಞಾನಿ, ಕೇಡನ್ನು ಬರಮಾಡುವರು. ಅವರು ತಮ್ಮ ಮಾತನ್ನು ಹಿಂದೆಗೆಯುವುದಿಲ್ಲ. ಆದರೆ ಕೆಡುಕರ ಮನೆತನಕ್ಕೂ, ಅನ್ಯಾಯಗಾರರ ಸಹಾಯಕರಿಗೂ ವಿರುದ್ಧವಾಗಿ ಏಳುವನು.</verse>
				<verse number="3">ಈಜಿಪ್ಟಿನವರು ಮನುಷ್ಯ ಮಾತ್ರದವರೇ, ದೇವರಲ್ಲ; ಅವರ ಅಶ್ವಗಳು ಆತ್ಮವಲ್ಲ, ಮೂಳೆಮಾಂಸವೇ. ಹೀಗಿರುವುದರಿಂದ ಯೆಹೋವ ದೇವರು ತನ್ನ ಕೈಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯ ಪಡೆದವನೂ ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.</verse>
				<verse number="4">ಯೆಹೋವ ದೇವರು ನನಗೆ ಹೀಗೆ ಹೇಳಿದ್ದಾನೆ: ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ, ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವುದೋ, ಹಾಗೆಯೇ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತಕ್ಕೋಸ್ಕರವೂ, ಅದರ ಗುಡ್ಡಕ್ಕೋಸ್ಕರವೂ ಯುದ್ಧಮಾಡಲು ಇಳಿದು ಬರುವರು.</verse>
				<verse number="5">ರೆಕ್ಕೆಗಳನ್ನು ಚಾಚಿದ ಪಕ್ಷಿಗಳಂತೆ ಸೇನಾಧೀಶ್ವರ ಯೆಹೋವ ದೇವರು ಯೆರೂಸಲೇಮನ್ನು ಕಾಪಾಡುವರು. ಅದನ್ನು ರಕ್ಷಿಸಿ ಕಾಯುವರು. ಹಾದುಹೋಗುತ್ತಾ ಅಪಾಯದಿಂದ ತಪ್ಪಿಸುವರು.</verse>
				<verse number="6">ಇಸ್ರಾಯೇಲರೇ, ನೀವು ಯಾರಿಗೆ ಅಗಾಧ ದ್ರೋಹವನ್ನು ಮಾಡಿದ್ದೀರೋ, ಆತನ ಕಡೆಗೆ ತಿರುಗಿಕೊಳ್ಳಿರಿ.</verse>
				<verse number="7">ಏಕೆಂದರೆ ನೀವು ನಿಮ್ಮ ಸ್ವಂತ ಕೈಗಳು ಪಾಪಕ್ಕೋಸ್ಕರ ಮಾಡಿದ ಬೆಳ್ಳಿಯ ಮತ್ತು ಬಂಗಾರದ ವಿಗ್ರಹಗಳನ್ನು ಆ ದಿನದಲ್ಲಿ ಪ್ರತಿಯೊಬ್ಬನು ಬಿಸಾಡಿಬಿಡುವನು.</verse>
				<verse number="8">ಆಗ ಅಸ್ಸೀರಿಯದವರು ಖಡ್ಗದಿಂದ ಬೀಳುವರು. ಅದು ಮನುಷ್ಯರ ಖಡ್ಗವಲ್ಲ, ಖಡ್ಗವು ಅವರನ್ನು ನುಂಗುವುದು. ಅದು ಮಾನವ ಖಡ್ಗವಲ್ಲ. ಅವರು ಖಡ್ಗದಿಂದ ತಪ್ಪಿಸಿಕೊಳ್ಳಲು ಓಡುವರು. ಅವರ ಯೌವನಸ್ಥರು ಜೀತದಾಳುಗಳಾಗುವರು.</verse>
				<verse number="9">ಭಯಾನಕತೆಯಿಂದ ಅವರ ಕೋಟೆ ಬೀಳುವುದು, ಯುದ್ಧದ ದೃಶ್ಯವನ್ನು ನೋಡಿ ಅವರ ಸೇನಾಪತಿಗಳು ಧ್ವಜಸ್ಥಾನದಿಂದ ದಿಕ್ಕುಪಾಲಾಗುವರು. ಚೀಯೋನಿನಲ್ಲಿ ಅಗ್ನಿಯನ್ನೂ, ಯೆರೂಸಲೇಮಿನಲ್ಲಿ ಕುಲುಮೆಯನ್ನೂ ಮಾಡಿಕೊಂಡಿರುವ ಯೆಹೋವ ದೇವರು ಘೋಷಿಸುತ್ತಾರೆ.</verse>
			</chapter>
			<chapter number="32">
				<verse number="1">ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.</verse>
				<verse number="2">ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ, ಬಿರುಗಾಳಿಗೋಸ್ಕರ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿಯ ನೀರಿನ ಕಾಲುವೆಗಳ ಹಾಗೂ, ಬಾಯಾರಿದ ನಾಡಿಗೆ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.</verse>
				<verse number="3">ಆಗ ನೋಡುವವರ ಕಣ್ಣುಗಳು ಮೊಬ್ಬಾಗವು, ಕೇಳುವವರ ಕಿವಿಗಳು ಮಂದವಾಗವು.</verse>
				<verse number="4">ಆತುರಗಾರರ ಹೃದಯವು ತಿಳುವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆ ಸ್ವಚ್ಛವಾಗಿ ಮಾತನಾಡುವುದಕ್ಕೆ ಸಿದ್ಧವಾಗಿರುವುದು.</verse>
				<verse number="5">ಇನ್ನು ಮೇಲೆ ಮೂರ್ಖನು ಘನವಂತನೆನಿಸಿಕೊಳ್ಳನು. ಮೋಸಗಾರನು ಮಹನೀಯನೆನಿಸಿಕೊಳ್ಳನು.</verse>
				<verse number="6">ಏಕೆಂದರೆ ಮೂರ್ಖನು ಮೂರ್ಖವಾಗಿ ಮಾತನಾಡುವನು. ಅವನ ಹೃದಯವು ಕಪಟತ್ವವನ್ನು ಅಭ್ಯಾಸಿಸುವಂತೆಯೂ, ಯೆಹೋವ ದೇವರಿಗೆ ವಿರೋಧವಾಗಿ ಸಂಪೂರ್ಣವಾಗಿ ತಪ್ಪಿ ಹೋಗುವವರಂತೆಯೂ, ಹಸಿವೆಗೊಂಡವನ ಆಶೆಯನ್ನು ಬರಿದು ಮಾಡುವಂತೆಯೂ ಕೇಡನ್ನು ಮಾಡುವನು. ಬಾಯಾರಿದವನ ಪಾನವನ್ನು ಇಲ್ಲದಂತೆ ಮಾಡುವ ಹಾಗೆ ಕಾರಣನಾಗುವನು.</verse>
				<verse number="7">ಮೋಸಗಾರನ ಆಯುಧಗಳು ಕೆಟ್ಟವುಗಳೇ, ದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, ಅವನು ಬಡವರನ್ನು ಸುಳ್ಳು ಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು.</verse>
				<verse number="8">ಘನವಂತನಾದರೋ, ಘನಕಾರ್ಯಗಳನ್ನು ಕಲ್ಪಿಸುವನು. ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.</verse>
				<verse number="9">ನಿಶ್ಚಿಂತೆಯರಾದ ಮಹಿಳೆಯರೇ, ಏಳಿರಿ. ನನ್ನ ಸ್ವರವನ್ನು ಕೇಳಿರಿ. ಭಯವಿಲ್ಲದ ಹೆಣ್ಣು ಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ.</verse>
				<verse number="10">ಈಗ ಸುಖವಾಗಿ ಕುಳಿತಿದ್ದೀರಿ, ನಿಶ್ಚಿಂತೆಯಿಂದಿದ್ದೀರಿ. ಇನ್ನು ಒಂದು ವರ್ಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಏಕೆಂದರೆ, ಆಗ ದ್ರಾಕ್ಷಿ ಕೊಯಿಲು ನಿಂತುಹೋಗುವುದು. ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ.</verse>
				<verse number="11">ನಿಶ್ಚಿಂತೆಯುಳ್ಳ ಸ್ತ್ರೀಯರೇ, ನೀವು ನಡುಗಿರಿ. ನಿರ್ಭೀತ ಪುತ್ರಿಯರೇ, ಕಳವಳಗೊಳ್ಳಿರಿ. ನಿಮ್ಮ ಬಟ್ಟೆಯನ್ನು ಕಿತ್ತುಹಾಕಿ, ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.</verse>
				<verse number="12">ಇಷ್ಟವಾದ ಹೊಲಗಳ ಮತ್ತು ಫಲವತ್ತಾದ ದ್ರಾಕ್ಷಾಲತೆಗಳ ನಿಮಿತ್ತವೂ ನಿಮ್ಮ ಎದೆ ಬಡಿದುಕೊಳ್ಳಿರಿ.</verse>
				<verse number="13">ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. ಉಲ್ಲಾಸದಿಂದ ಕೂಡಿದ್ದ ಮನೆಗಳೂ ಲವಲವಿಕೆಯಿಂದ ತುಂಬಿದ್ದ ನಗರಗಳೂ ಶೂನ್ಯವಾಗಿವೆ.</verse>
				<verse number="14">ಅರಮನೆ ಹಾಳುಬಿದ್ದಿದೆ. ಗಲಭೆಯಪಟ್ಟಣವು ನಿರ್ಜನವಾಗುವುದು, ಪರ್ವತ ಮತ್ತು ಬುರುಜು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ, ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.</verse>
				<verse number="15">ಆದರೆ ದೇವರು ಉನ್ನತಲೋಕದಲ್ಲಿ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು, ಫಲಭರಿತ ಭೂಮಿ ಸಮೃದ್ಧವಾದ ಅರಣ್ಯವಾಗಿ ಮಾರ್ಪಡುವುದು.</verse>
				<verse number="16">ನ್ಯಾಯವು ಮರುಭೂಮಿಯಲ್ಲಿ ನೆಲೆಗೊಳ್ಳುವುದು, ಪೈರಿನ ಹೊಲದಲ್ಲಿ ನೀತಿಯು ನೆಲೆಯಾಗಿರುವುದು.</verse>
				<verse number="17">ನೀತಿಯ ಕೆಲಸವು ಸಮಾಧಾನವೂ, ನೀತಿಯ ಫಲವು ನಿತ್ಯವಾದ ಶಾಂತಿಯೂ, ಭರವಸೆಯೂ ಆಗಿರುವುದು.</verse>
				<verse number="18">ಆಗ ನನ್ನ ಜನರು ಸಮಾಧಾನದ ನಿವಾಸಗಳಲ್ಲಿಯೂ, ಭದ್ರವಾದ ಸ್ಥಳಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.</verse>
				<verse number="19">ಆದರೆ ಕಲ್ಮಳೆ ಸುರಿಯುವಾಗ ವನವು ಹಾಳಾಗುವುದು. ಪಟ್ಟಣವು ಸಂಪೂರ್ಣವಾಗಿ ನೆಲಸಮವಾಗುವುದು.</verse>
				<verse number="20">ನೀರಿರುವ ಎಲ್ಲಾ ಕಡೆಗಳಲ್ಲಿ ಬಿತ್ತನೆ ಮಾಡಿ, ದನಕತ್ತೆಗಳನ್ನು ಮೇಯಲು ಬಿಡುವ ನೀವು ಧನ್ಯರೇ ಸರಿ.</verse>
			</chapter>
			<chapter number="33">
				<verse number="1">ಹಾಳು ಮಾಡುತ್ತಿರುವವನೇ, ನಿನಗೆ ಕಷ್ಟ! ನಿನ್ನನ್ನು ಯಾರೂ ಸೂರೆಮಾಡದಿದ್ದರೂ ನೀನು ಸೂರೆಮಾಡುತ್ತಿರುವೆ; ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆ ಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳು ಮಾಡುತ್ತಿರುವ ನೀನು, ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.</verse>
				<verse number="2">ಯೆಹೋವ ದೇವರೇ, ನಮ್ಮ ಕಡೆಗೆ ಕೃಪೆ ತೋರಿಸಿರಿ. ನಿನಗೋಸ್ಕರ ನಾವು ಕಾದಿದ್ದೇವೆ. ಪ್ರತಿ ಮುಂಜಾನೆ ನಮಗೆ ಭುಜಬಲವಾಗಿಯೂ, ಇಕ್ಕಟ್ಟಿನ ಕಾಲದಲ್ಲಿ ನಮ್ಮ ರಕ್ಷಣೆಯಾಗಿಯೂ ಇರು.</verse>
				<verse number="3">ನಿಮ್ಮ ಸೈನ್ಯದ ಕೋಲಾಹಲದ ಶಬ್ದಕ್ಕೆ ಜನರು ಓಡಿಹೋಗುತ್ತಾರೆ, ನೀವು ಏಳುವಾಗ ರಾಜ್ಯಗಳು ಚದರಿ ಹೋಗುತ್ತವೆ.</verse>
				<verse number="4">ನಿಮ್ಮ ಕೊಳ್ಳೆಯನ್ನು ಇತರರು ಮಿಡತೆಗಳಂತೆ ಕೊಳ್ಳೆಮಾಡುವರು, ಮಿಡತೆಗಳು ಓಡಾಡುವ ಹಾಗೆ ಮನುಷ್ಯರು ಅದರ ಮೇಲೆ ಓಡಾಡುವರು.</verse>
				<verse number="5">ಯೆಹೋವ ದೇವರು ಉನ್ನತೋನ್ನತನಾಗಿದ್ದಾನೆ. ಏಕೆಂದರೆ ಆತನು ಮೇಲಿನ ಲೋಕದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿ ಮತ್ತು ನ್ಯಾಯಗಳಿಂದ ತುಂಬಿಸಿದ್ದಾನೆ.</verse>
				<verse number="6">ಅವರು ನಿಮ್ಮ ಸಮಯಕ್ಕೆ ಖಚಿತವಾದ ಆಧಾರವಾಗುತ್ತಾರೆ. ರಕ್ಷಣೆ ಜ್ಞಾನ ತಿಳುವಳಿಕೆಗಳ ನಿಕ್ಷೇಪವಾಗಿಯೂ ಇರುವನು. ಯೆಹೋವ ದೇವರ ಭಯವೇ ಅವನ ಬೊಕ್ಕಸವಾಗಿರುವುದು.</verse>
				<verse number="7">ಅವರ ಪರಾಕ್ರಮಶಾಲಿಗಳು ಹೊರಗೆ ಕೂಗುತ್ತಾರೆ; ಸಮಾಧಾನದ ರಾಯಭಾರಿಗಳು ಘೋರವಾಗಿ ಅಳುತ್ತಿದ್ದಾರೆ.</verse>
				<verse number="8">ರಾಜ ಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ನಿಂತು ಹೋದರು. ಅವನು ಒಪ್ಪಂದವನ್ನು ಮೀರಿದ್ದಾನೆ. ಪಟ್ಟಣಗಳನ್ನು ತಿರಸ್ಕಾರ ಮಾಡಿ, ಯಾವ ಮನುಷ್ಯನನ್ನು ಗಣನೆಗೆ ತಾರನು.</verse>
				<verse number="9">ದೇಶವು ಪ್ರಲಾಪಿಸಿ ಕುಗ್ಗುತ್ತದೆ. ಲೆಬನೋನು ನಾಚಿಕೆಪಟ್ಟು ಕಡಿದು ಬೀಳುವುದು. ಶಾರೋನ್ ಬೆಂಗಾಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.</verse>
				<verse number="10">ಯೆಹೋವ ದೇವರು ಹೀಗೆನ್ನುತ್ತಾರೆ, “ನಾನು ಈಗ ಏಳುವೆನು. ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು. ಈಗ ಉನ್ನತೋನ್ನತನಾಗುವೆನು.</verse>
				<verse number="11">ನೀವು ಒಣಹುಲ್ಲನ್ನು ಗರ್ಭಧರಿಸಿ, ಪೈರಿನ ಮೋಟನ್ನು ಹೆರುವಿರಿ. ನಿಮ್ಮ ಶ್ವಾಸವು ನಿಮ್ಮನ್ನೇ ನುಂಗುವ ಜ್ವಾಲೆಯಾಗುವುದು.</verse>
				<verse number="12">ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವುವು. ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿ ಹಚ್ಚಿದಂತಾಗುವುದು.”</verse>
				<verse number="13">ದೂರದಲ್ಲಿರುವವರೇ, ನಾನು ಮಾಡಿದ್ದನ್ನು ಕೇಳಿರಿ. ಸಮೀಪದಲ್ಲಿರುವವರೇ, ನನ್ನ ಪರಾಕ್ರಮವನ್ನು ತಿಳಿದುಕೊಳ್ಳಿರಿ.</verse>
				<verse number="14">ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯದಿಂದ ಕಪಟಿಗಳು ಆಶ್ಚರ್ಯಕ್ಕೊಳಗಾಗಿ ಹೀಗೆ ಎಂದುಕೊಳ್ಳುವರು, “ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ವಾಸಿಸಬಲ್ಲರು?”</verse>
				<verse number="15">ನೀತಿಯಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು ಲಂಚ ಮುಟ್ಟದಂತೆ ಕೈಚಾಚಿದೆ. ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ಕಾಣದಂತೆ ಕಣ್ಣು ಮುಚ್ಚಿಕೊಳ್ಳುವವರೇ ಉನ್ನತ ಸ್ಥಳದಲ್ಲಿ ವಾಸಿಸುವರು.</verse>
				<verse number="16">ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿರುವುವು. ರೊಟ್ಟಿಯು ಅವನಿಗೆ ಒದಗುವುದು. ನೀರು ತಪ್ಪುವುದಿಲ್ಲ.</verse>
				<verse number="17">ರಾಜನ ಸೌಂದರ್ಯವನ್ನು ನಿನ್ನ ಕಣ್ಣುಗಳು ನೋಡುವುವು. ಅತಿವಿಸ್ತಾರವಾದ ದೇಶವನ್ನು ಕಣ್ಣು ತುಂಬಾ ನೋಡುವಿರಿ.</verse>
				<verse number="18">ಆಗ ನೀವು ಹಿಂದಿನ ಭಯಂಕರವಾದ ವಿಷಯಗಳನ್ನು ಮನಸ್ಸಿಗೆ ತಂದುಕೊಳ್ಳುತ್ತಾ, “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕ ಮಾಡಿದವನು ಎಲ್ಲಿ? ಗೋಪುರಗಳನ್ನು ಎಣಿಸಿದವನು ಎಲ್ಲಿ?” ಎಂದುಕೊಳ್ಳುವಿರಿ.</verse>
				<verse number="19">ನೀನು ತಿಳಿಯಲಾಗದ ಹಾಗೆ ಕಠಿಣ ಭಾಷೆಯೂ, ಗ್ರಹಿಸಲಾಗದ ಹಾಗೆ ಅಪರೂಪವಾದ ಮಾತನ್ನು ಆಡಿದ ಜನರನ್ನೂ ಇನ್ನು ಮುಂದೆ ನೀನು ನೋಡುವುದಿಲ್ಲ.</verse>
				<verse number="20">ನಮ್ಮ ಹಬ್ಬಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ. ಯೆರೂಸಲೇಮು ನೆಮ್ಮದಿಯ ನಿವಾಸವಾಗಿಯೂ, ಗೂಟಕೀಳದ ಹಗ್ಗಹರಿಯದ ಒಂದೇ ಕಡೆ ಇರುವ ಗುಡಾರವಾಗಿಯೂ ಇರುವುದನ್ನು ನೀವು ಕಣ್ಣಾರೆ ಕಾಣುವಿರಿ.</verse>
				<verse number="21">ಅಲ್ಲಿ ಯೆಹೋವ ದೇವರು ನಮ್ಮ ಬಲಶಾಲಿಯಾಗಿರುತ್ತಾರೆ. ನದಿಸರೋವರಗಳಂತೆ ನಮ್ಮನ್ನು ಸುತ್ತುವರಿಯುವರು. ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡದಾದ ಹಡಗಾಗಲಿ ಅದನ್ನು ದಾಟುವುದಿಲ್ಲ.</verse>
				<verse number="22">ಏಕೆಂದರೆ ಯೆಹೋವ ದೇವರು ನಮ್ಮ ನ್ಯಾಯಾಧಿಪತಿಯಾಗಿದ್ದಾರೆ. ಯೆಹೋವ ದೇವರು ನಮಗೆ ಆಜ್ಞೆಕೊಡುವವರು. ಯೆಹೋವ ದೇವರೇ, ನಮ್ಮ ರಾಜ. ಯೆಹೋವ ದೇವರೇ ನಮ್ಮನ್ನು ರಕ್ಷಿಸುವವರು.</verse>
				<verse number="23">ನಿನ್ನ ಹಗ್ಗಗಳು ಸಡಲಿ, ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು. ಪಠವನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವುದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆ ಮಾಡಿದರು.</verse>
				<verse number="24">ಚೀಯೋನಿನ ಯಾವ ನಿವಾಸಿಯೂ, “ನಾನು ಅಸ್ವಸ್ಥನಾಗಿದ್ದೇನೆ,” ಎಂದು ಹೇಳನು. ಅದರಲ್ಲಿ ವಾಸವಾಗಿರುವ ಜನರ ಪಾಪವು ಕ್ಷಮಿಸಲಾಗುವುದು.</verse>
			</chapter>
			<chapter number="34">
				<verse number="1">ರಾಷ್ಟ್ರಗಳೇ, ಕೇಳುವುದಕ್ಕೆ ಹತ್ತಿರ ಬನ್ನಿರಿ, ಕಿವಿಗೊಡಿರಿ. ಭೂಮಿಯೂ, ಅದರಲ್ಲಿರುವ ಸಮಸ್ತವೂ; ಲೋಕವೂ, ಅದರ ಎಲ್ಲಾ ಹುಟ್ಟುವಳಿಯೂ ಕೇಳಲಿ.</verse>
				<verse number="2">ಯೆಹೋವ ದೇವರ ಕೋಪವು ಸಕಲ ರಾಷ್ಟ್ರಗಳ ಮೇಲೂ, ಅವುಗಳ ಎಲ್ಲಾ ಸೈನ್ಯಗಳ ಮೇಲೂ ರೋಷಗೊಂಡು, ಅವರನ್ನು ಕೊಲೆಗೆ ಗುರಿಮಾಡಿ, ಸಂಪೂರ್ಣವಾಗಿ ನಾಶಮಾಡಿದ್ದಾನೆ.</verse>
				<verse number="3">ಅವರಲ್ಲಿ ಹತರಾದವರು, ಬೀದಿಪಾಲಾಗುವರು. ಅವರ ಹೆಣಗಳ ದುರ್ವಾಸನೆಯು ಮೇಲಕ್ಕೆ ಏರುವುದು. ಅವರ ರಕ್ತ ಪ್ರವಾಹದಿಂದ ಪರ್ವತಗಳು ತೋಯಿಸುವುದು.</verse>
				<verse number="4">ಆಕಾಶದ ಸೈನ್ಯವೆಲ್ಲಾ ಗತಿಸಿ ಹೋಗುವುದು. ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿ ಎಲೆ ಒಣಗಿ, ಗಿಡದಿಂದ ಬೀಳುವಂತೆಯೂ, ಅಂಜೂರ ಮರದಿಂದ ಸುಕ್ಕುಗಟ್ಟಿದ ಅಂಜೂರ ಹಣ್ಣುಗಳು ಉದುರುವಂತೆ ತಾರಾಮಂಡಲವೆಲ್ಲಾ ಬಾಡಿ ಬೀಳುವದು.</verse>
				<verse number="5">ನನ್ನ ಖಡ್ಗವು ಪರಲೋಕದಲ್ಲಿ ರೋಷಪಾನ ಮಾಡುವುದು. ಇಗೋ, ಅದು ಎದೋಮಿನ ಮತ್ತು ನಾನು ಶಪಿಸಿದ ಜನರ ಮೇಲೆಯೂ, ನ್ಯಾಯತೀರಿಸುವುದಕ್ಕಾಗಿ ಕೆಳಗೆ ಇಳಿದು ಬರುವುದು.</verse>
				<verse number="6">ಯೆಹೋವ ದೇವರ ಖಡ್ಗವು ರಕ್ತದಲ್ಲಿ ಸ್ನಾನ ಮಾಡಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಮುಚ್ಚಲಾಗಿದೆ. ಏಕೆಂದರೆ ಯೆಹೋವ ದೇವರಿಗೆ ಬೊಚ್ರದಲ್ಲಿ ಬಲಿಯು, ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯು ಉಂಟು.</verse>
				<verse number="7">ಕಾಡುಕೋಣಗಳೂ ಹೋರಿಗೂಳಿಗಳೂ ಈ ಯಜ್ಞಪಶುಗಳೊಂದಿಗೆ ಬೀಳುವುವು; ನಾಡು ರಕ್ತದಿಂದ ತೊಯ್ದಿರುವುದು; ಅಲ್ಲಿನ ಧೂಳು ಕೊಬ್ಬಿನಿಂದ ಜಿಡ್ಡಾಗಿರುವುದು.</verse>
				<verse number="8">ಏಕೆಂದರೆ ಅದು ಯೆಹೋವ ದೇವರು ಮುಯ್ಯಿ ತೀರಿಸುವ ದಿನವಾಗಿದೆ, ಚೀಯೋನಿನ ವ್ಯಾಜ್ಯದಲ್ಲಿ ದಂಡನೆ ವಿಧಿಸತಕ್ಕ ವರುಷವು ಒದಗಿದೆ.</verse>
				<verse number="9">ಎದೋಮಿನ ಪ್ರವಾಹಗಳು ಇಳಿಜಾರಾಗಿ ಮಾರ್ಪಡುವುವು. ಅದರ ಧೂಳು ಗಂಧಕವಾಗುವುದು, ದೇಶವು ಉರಿಯುವ ಡಾಂಬರಿನಂತೆ ಇರುವುದು.</verse>
				<verse number="10">ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರುವುದಿಲ್ಲ. ಅದರ ಹೊಗೆಯು ನಿರಂತರವಾಗಿ ಏಳುತ್ತಿರುವುದು. ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರುವುದು, ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು.</verse>
				<verse number="11">ಆದರೆ ಬಕಪಕ್ಷಿಯು ಮತ್ತು ಮುಳ್ಳುಹಂದಿಯು ಅದನ್ನು ಆವರಿಸಿಕೊಳ್ಳುವುವು. ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವುವು. ಗಲಿಬಿಲಿ ಎಂಬ ನೂಲನ್ನು, ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು.</verse>
				<verse number="12">ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು. ಆದರೆ ಅಲ್ಲಿ ಯಾರೂ ಇರುವುದಿಲ್ಲ. ಅವಳ ಪ್ರಭುಗಳು ಇಲ್ಲದಂತಾಗುವರು.</verse>
				<verse number="13">ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವುವು, ಅದರ ಕೋಟೆಗಳಲ್ಲಿ ಮುಳ್ಳುಪೊದೆಗಳು ಇರುವುವು. ಅದು ನರಿಗಳ ನಿವಾಸವೂ, ಗೂಬೆಗಳಿಗೆ ಸ್ಥಾನವೂ ಆಗುವುದು.</verse>
				<verse number="14">ಮರುಭೂಮಿಯ ಕಾಡುಮೃಗಗಳು ತೋಳಗಳೊಂದಿಗೆ ಸಂಧಿಸುವುವು, ಕಾಡುಮೇಕೆಗಳು ಪರಸ್ಪರ ಕರೆಯುತ್ತವೆ. ರಾತ್ರಿ ಮೃಗಗಳು ಸಹ ಅಲ್ಲಿ ಮಲಗುತ್ತವೆ. ತಮಗಾಗಿ ವಿಶ್ರಾಂತಿ ಸ್ಥಳಗಳನ್ನು ಕಂಡುಕೊಳ್ಳುತ್ತವೆ.</verse>
				<verse number="15">ಅಲ್ಲಿ ಗೂಬೆಯು ಗೂಡನ್ನು ಮಾಡಿಕೊಂಡು, ಮೊಟ್ಟೆ ಇಟ್ಟು, ಮರಿ ಮಾಡಿ, ಅವುಗಳನ್ನು ತನ್ನ ರೆಕ್ಕೆಗಳ ನೆರಳಿನಲ್ಲಿ ಕಾಪಾಡುವುದು. ಅಲ್ಲಿಯೂ ಸಹ ಹದ್ದುಗಳು ಪ್ರತಿಯೊಂದೂ ಜೊತೆಜೊತೆಯಾಗಿ ಸೇರಿರುತ್ತವೆ.</verse>
				<verse number="16">ಯೆಹೋವ ದೇವರ ಗ್ರಂಥದಲ್ಲಿ ನೀವು ಹುಡುಕಿ ಓದಿರಿ, ಇವುಗಳಲ್ಲಿ ಒಂದಾದರೂ ತಪ್ಪದು. ಜೊತೆಯಿಲ್ಲದೆ ಒಂದೂ ಇರುವುದಿಲ್ಲ. ಏಕೆಂದರೆ ನನ್ನ ಬಾಯಿಯೇ ಅದನ್ನು ಆಜ್ಞಾಪಿಸಿತು. ಅವರ ಆತ್ಮವೇ ಅವುಗಳನ್ನು ಒಟ್ಟುಗೂಡಿಸಿತು.</verse>
				<verse number="17">ಅವರೇ ಅವುಗಳಿಗೋಸ್ಕರ ಚೀಟು ಹಾಕಿದ್ದಾರೆ. ಅವರ ಕೈಯೇ ಅದನ್ನು ಗೆರೆ ಎಳೆದು, ಅವರಿಗೆ ಹಂಚಿಕೊಟ್ಟಿದೆ. ಅವು ಅದನ್ನು ನಿರಂತರಕ್ಕೂ ವಶಮಾಡಿಕೊಳ್ಳುವುವು. ಅವು ತಲತಲಾಂತರಕ್ಕೂ ಅದರಲ್ಲಿ ವಾಸವಾಗಿರುವುವು.</verse>
			</chapter>
			<chapter number="35">
				<verse number="1">ಅರಣ್ಯವೂ, ಮರುಭೂಮಿಯೂ ಆನಂದಿಸುವುದು: ಒಣ ನೆಲವು ಹರ್ಷಿಸಿ, ತಾವರೆಯಂತೆ ಕಳಕಳಿಸುವುದು.</verse>
				<verse number="2">ಅದು ಸಮೃದ್ಧಿಯಾಗಿ ಅರಳಿ, ಆನಂದ ಧ್ವನಿ ಎತ್ತಿ ಉಲ್ಲಾಸಿಸುವುದು. ಲೆಬನೋನಿನ ಘನತೆಯು ಮತ್ತು ಕರ್ಮೆಲ್, ಶಾರೋನಿನ ಗೌರವವು ಅದಕ್ಕೆ ಕೊಡಲಾಗುವುದು. ಅವರು ಯೆಹೋವ ದೇವರ ಮಹಿಮೆಯನ್ನು ಮತ್ತು ನಮ್ಮ ದೇವರ ಘನತೆಯನ್ನು ಕಾಣುವರು.</verse>
				<verse number="3">ನೀವು ಬಲಹೀನವಾದ ಕೈಗಳನ್ನು ಬಲಪಡಿಸಿರಿ. ನಡುಗುವ ಮೊಣಕಾಲುಗಳನ್ನು ದೃಢಪಡಿಸಿರಿ.</verse>
				<verse number="4">ಭಯಭ್ರಾಂತ ಹೃದಯವುಳ್ಳವರಿಗೆ ಬಲಗೊಳ್ಳಿರಿ, ಹೆದರಬೇಡಿರಿ. ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವುದಕ್ಕೂ, ದೇವರು ಪ್ರತಿಫಲವನ್ನು ಕೊಡುವುದಕ್ಕೂ ತಾವೇ ಬಂದು ನಿಮ್ಮನ್ನು ರಕ್ಷಿಸುವರು, ಎಂದು ಅವರಿಗೆ ಹೇಳಿರಿ.</verse>
				<verse number="5">ಆಗ, ಕುರುಡರ ಕಣ್ಣು ಕಾಣುವುದು. ಕಿವುಡರ ಕಿವಿಗಳು ಕೇಳಿಸುವುವು.</verse>
				<verse number="6">ಆಗ ಕುಂಟನು ಜಿಂಕೆಯಂತೆ ಹಾರುವನು, ಮೂಕನ ನಾಲಿಗೆಯೂ ಹರ್ಷದಿಂದ ಹಾಡುವುದು. ಏಕೆಂದರೆ ಮರುಭೂಮಿಯಲ್ಲಿ ನೀರೂ, ಮರುಭೂಮಿಯಲ್ಲಿ ಒರತೆಗಳೂ ಒಡೆಯುವುವು.</verse>
				<verse number="7">ಒಣ ನೆಲವು ಸರೋವರವಾಗುವುದು, ಬೆಂಗಾಡು ಪ್ರದೇಶವು ನೀರಿನ ಬುಗ್ಗೆಯಾಗುವುದು. ನರಿಗಳು ವಾಸಿಸುವ ಪ್ರತಿಯೊಂದು ಮಲಗುವ ಸ್ಥಳದಲ್ಲಿ ಹುಲ್ಲು, ಜೊಂಡು, ಆಪು ಹುಲ್ಲುಗಳಿಂದ ತುಂಬಿರುವುದು.</verse>
				<verse number="8">ಅಲ್ಲಿ ರಾಜಮಾರ್ಗ ಇರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನು ಅದರ ಮೇಲೆ ಹಾದು ಹೋಗನು. ಆದರೆ ಅದು ದೇವಜನರಿಗಾಗಿ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿ ತಪ್ಪನು.</verse>
				<verse number="9">ಸಿಂಹವು ಅಲ್ಲಿ ಇರದು, ಇಲ್ಲವೆ ಕ್ರೂರವಾದ ಮೃಗಗಳು ಅದರ ಮೇಲೆ ಹೋಗವು. ಅದು ಅಲ್ಲಿ ಕಾಣುವುದೇ ಇಲ್ಲ. ಆದರೆ ಬಿಡುಗಡೆಯಾದವರೇ ಅಲ್ಲಿ ನಡೆಯುವರು.</verse>
				<verse number="10">ಯೆಹೋವ ದೇವರು ವಿಮೋಚಿಸಿದವರು ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.</verse>
			</chapter>
			<chapter number="36">
				<verse number="1">ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.</verse>
				<verse number="2">ಆಗ ಅಸ್ಸೀರಿಯದ ಅರಸನು ಲಾಕೀಷಿನಿಂದ ದೊಡ್ಡ ಸೈನ್ಯದೊಂದಿಗೆ ರಬ್ಷಾಕೆ ಎಂಬವನನ್ನು ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವನು ಅಗಸರ ಹೊಲದ ಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಸಮೀಪದಲ್ಲಿ ನಿಂತುಕೊಂಡನು.</verse>
				<verse number="3">ಆಗ ಅರಮನೆಯ ಕಾರ್ಯನಿರ್ವಾಹಕನಾದ ಹಿಲ್ಕೀಯನ ಮಗ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬುವರು ಅವನ ಬಳಿಗೆ ಬಂದರು.</verse>
				<verse number="4">ರಬ್ಷಾಕೆಯು ಅವರಿಗೆ, “ನೀವು ಹಿಜ್ಕೀಯನಿಗೆ ಹೀಗೆ ಹೇಳಬೇಕು: “ ‘ಮಹಾರಾಜನಾದ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ಈ ನಿನ್ನ ಭರವಸೆಗೆ ಆಧಾರ ಏನು?</verse>
				<verse number="5">ಯುದ್ಧಕ್ಕೆ ಬೇಕಾದ ಆಲೋಚನೆಯೂ, ಪರಾಕ್ರಮವೂ ಉಂಟೆಂದು ಹೇಳುವ ನಿನ್ನ ಮಾತು ಬರೀ ವ್ಯರ್ಥವಾದ ಮಾತುಗಳೇ, ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀಯೆ?</verse>
				<verse number="6">ಇಗೋ! ನೀನು ಜಜ್ಜಿದ ದಂಟಿಗೆ ಸಮಾನವಾಗಿರುವ ಈಜಿಪ್ಟಿನ ಮೇಲೆ ಭರವಸೆ ಇಟ್ಟಿರುವಿಯಷ್ಟೆ, ಅದರ ಮೇಲೆ ಮನುಷ್ಯನು ಊರಿಕೊಂಡರೆ ಅದು ಅವನ ಕೈಯನ್ನೇ ಚುಚ್ಚಿ ಗಾಯ ಮಾಡುವುದು. ಈಜಿಪ್ಟಿನ ಅರಸನಾದ ಫರೋಹನಲ್ಲಿ ಭರವಸೆ ಇಟ್ಟವರೆಲ್ಲರಿಗೂ ಇದೇ ಗತಿಯಾಗುವದು.</verse>
				<verse number="7">ಬಹುಶಃ ನೀವು, “ನಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿದ್ದೇವೆ,” ಎಂದು ಹೇಳಬಹುದು. “ಯೆರೂಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆ ಮಾಡಬೇಕು” ಎಂದು ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ ಹಿಜ್ಕೀಯನು ಆಜ್ಞಾಪಿಸಿ, ಆ ಯೆಹೋವ ದೇವರ ಪೂಜಾಸ್ಥಳಗಳನ್ನೂ, ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೇ?</verse>
				<verse number="8">“ ‘ಹಾಗಾದರೆ, ಈಗ ನೀನು ಅಸ್ಸೀರಿಯದ ಅರಸನಾದ ನನ್ನ ಯಜಮಾನನೊಂದಿಗೆ ಒಪ್ಪಂದ ಮಾಡಿಕೋ, ಆಗ ನಿನಗೆ ಎರಡು ಸಾವಿರ ಕುದುರೆಸವಾರರನ್ನು ಬಳಸಲು ಸಾಮರ್ಥ್ಯವಿದ್ದರೆ ನಾನು ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.</verse>
				<verse number="9">ಇದಾಗದಿದ್ದರೆ ನನ್ನ ಯಜಮಾನನ ಸೇವಕರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯನ್ನು ಹೇಗೆ ಎದುರಿಸುತ್ತೀ? ನೀನು ರಥಗಳಿಗೋಸ್ಕರವೂ, ರಾಹುತರಿಗೋಸ್ಕರವೂ ಈಜಿಪ್ಟಿನ ಮೇಲೆ ಭರವಸೆ ಇಟ್ಟಿದ್ದೀಯೋ?</verse>
				<verse number="10">ಈ ಸ್ಥಳವನ್ನು ನಾಶಮಾಡುವುದಕ್ಕೆ ಯೆಹೋವ ದೇವರ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಯೆಹೋವ ದೇವರೇ ನನಗೆ ಹೇಳಿದರು,’ ” ಎಂದನು.</verse>
				<verse number="11">ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವರು ರಬ್ಷಾಕೆಗೆ, “ನೀನು ಮಾತನಾಡುವುದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ ಆದ್ದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು: ಅದು ನಮಗೆ ತಿಳಿಯುತ್ತದೆ ಆದರೆ ಹಿಬ್ರಿಯ ಭಾಷೆಯಲ್ಲಿ ಮಾತನಾಡಬೇಡ,” ಎಂದು ಹೇಳಿದರು.</verse>
				<verse number="12">ಆದರೆ ರಬ್ಷಾಕೆಯು ಅವರಿಗೆ, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಯಜಮಾನನ ಸಂಗಡವಾಗಲಿ ಮಾತ್ರ ಈ ಮಾತುಗಳನ್ನು ಹೇಳುವುದಕ್ಕೆ ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಿಮ್ಮ ಸಂಗಡ ಇದ್ದರೆ ನಿಮ್ಮ ಹಾಗೆ ಇವರೂ ಸಹ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ,” ಎಂದು ಹೇಳಿದನು.</verse>
				<verse number="13">ಆಗ ರಬ್ಷಾಕೆ ನಿಂತುಕೊಂಡು ಯೆಹೂದ್ಯರ ಭಾಷೆಯಾದ ಹಿಬ್ರಿಯದಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿದ್ದೇನೆಂದರೆ, “ನೀವು ಅಸ್ಸೀರಿಯದ ಮಹಾರಾಜನ ಮಾತನ್ನು ಕೇಳಿರಿ.</verse>
				<verse number="14">ಅರಸನು ಹೇಳುವುದೇನೆಂದರೆ: ಹಿಜ್ಕೀಯನ ಮಾತನ್ನು ಕೇಳಿ ಮೋಸಹೋಗಬೇಡಿರಿ ಏಕೆಂದರೆ ಅವನು ನಿಮ್ಮನ್ನು ಬಿಡಿಸಲು ಶಕ್ತನಲ್ಲ.</verse>
				<verse number="15">ಇದಲ್ಲದೆ, ‘ಯೆಹೋವ ದೇವರು ನಮ್ಮನ್ನು ನಿಶ್ಚಯವಾಗಿ ರಕ್ಷಿಸುವರೆಂದೂ, ಈ ಪಟ್ಟಣವು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲವೆಂದೂ ಹಿಜ್ಕೀಯನು ನಿಮಗೆ ಯೆಹೋವ ದೇವರಲ್ಲಿ ಭರವಸೆ ಇಡುವಂತೆ ಮಾಡುವರು.’</verse>
				<verse number="16">“ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ. ಏಕೆಂದರೆ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡು, ನನ್ನ ಬಳಿಗೆ ಹೊರಟುಬನ್ನಿರಿ, ಆಗ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷಾಫಲವನ್ನೂ, ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.</verse>
				<verse number="17">ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು.</verse>
				<verse number="18">“ ‘ಯೆಹೋವ ದೇವರು ನಮ್ಮನ್ನು ರಕ್ಷಿಸುವರು,’ ಎಂದು ಹೇಳಿ ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸದಂತೆ ಎಚ್ಚರಿಕೆಯಾಗಿರಿ. ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಸ್ಸೀರಿಯದ ಅರಸನ ಕೈಯಿಂದ ಬಿಡಿಸಿದ್ದು ಉಂಟೋ?</verse>
				<verse number="19">ಹಮಾತ್, ಅರ್ಪಾದ್, ಸೆಫರ್ವಯಿಮಿನ ದೇವರುಗಳು ಎಲ್ಲಿ? ಅವರು ಸಮಾರ್ಯವನ್ನು ನನ್ನ ಕೈಯಿಂದ ಬಿಡಿಸಿಕೊಂಡರೋ?</verse>
				<verse number="20">ಈ ದೇಶಗಳ ಸಮಸ್ತ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ, ಯೆಹೋವ ದೇವರು ಯೆರೂಸಲೇಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು.</verse>
				<verse number="21">ಆದರೆ ಜನರು ಅವನಿಗೆ ಪ್ರತ್ಯುತ್ತರ ಕೊಡದೆ ಸುಮ್ಮನಿದ್ದರು. ಏಕೆಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.</verse>
				<verse number="22">ಆಗ ಅರಮನೆಯ ಮೇಲ್ವಿಚಾರಕನಾದ ಹಿಲ್ಕೀಯನ ಮಗ ಎಲ್ಯಾಕೀಮನೂ ಕಾರ್ಯದರ್ಶಿಯಾದ ಶೆಬ್ನನೂ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬವನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಸೈನ್ಯಾಧಿಕಾರಿಯಾದ ರಬ್ಷಾಕೆ ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.</verse>
			</chapter>
			<chapter number="37">
				<verse number="1">ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ, ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿ ತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು, ಯೆಹೋವ ದೇವರ ಆಲಯಕ್ಕೆ ಹೋದನು.</verse>
				<verse number="2">ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.</verse>
				<verse number="3">ಆಗ ಅವರು ಯೆಶಾಯನಿಗೆ, “ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.</verse>
				<verse number="4">ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು, ಎಂಬುದಾಗಿ ಹಿಜ್ಕೀಯನು ಅನ್ನುತ್ತಾನೆ,” ಎಂದು ಹೇಳಿದರು.</verse>
				<verse number="5">ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದು ಹೇಳಿದಾಗ,</verse>
				<verse number="6">ಯೆಶಾಯನು ಅವರಿಗೆ, “ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಕೇಳಿದಂಥ ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿದಂಥ ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.</verse>
				<verse number="7">ಇಗೋ, ನಾನು ಅವರ ಮೇಲೆ ಆತ್ಮವನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತನ್ನ ದೇಶಕ್ಕೆ ಹಿಂದಿರುಗುವನು. ಇದಲ್ಲದೆ ಅವನು ತನ್ನ ದೇಶದಲ್ಲಿ ಖಡ್ಗಕ್ಕೆ ತುತ್ತಾಗುವಂತೆ ಮಾಡುವೆನು,’ ” ಎಂದು ಹೇಳಿದನು.</verse>
				<verse number="8">ಹೀಗೆ ಸೈನ್ಯಾಧಿಕಾರಿಯು ಅಸ್ಸೀರಿಯದ ಅರಸನು ಲಾಕೀಷನ್ನು ಬಿಟ್ಟು ಹೊರಟಿದ್ದಾನೆಂದು ಕೇಳಿದಾಗ, ಅವನು ಲಿಬ್ನಕ್ಕೆ ಹೋಗಿ, ಅಲ್ಲಿ ಅರಸನು ಲಿಬ್ನದವರೊಂದಿಗೆ ಯುದ್ಧಮಾಡುತ್ತಿರುವುದನ್ನು ಕಂಡನು.</verse>
				<verse number="9">ಅಷ್ಟರಲ್ಲಿ ಕೂಷನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೊರಟಿದ್ದಾನೆಂಬ ಸುದ್ದಿಯನ್ನು ಅಸ್ಸೀರಿಯದ ಅರಸನು ಕೇಳಿ,</verse>
				<verse number="10">“ಹಿಜ್ಕೀಯನೇ, ನೀನು ನಂಬುವ ದೇವರು, ‘ಯೆರೂಸಲೇಮನ್ನು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ ನಿನ್ನನ್ನು ಮೋಸಗೊಳಿಸಾನು.</verse>
				<verse number="11">ಇಗೋ, ಅಸ್ಸೀರಿಯದ ಅರಸರು ಸಮಸ್ತ ದೇಶಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ನೀನು ಕೇಳಿದಿಯಲ್ಲಾ. ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವೆಯೋ?</verse>
				<verse number="12">ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ?</verse>
				<verse number="13">ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ,” ಎಂದು ಪತ್ರ ಬರೆದು ದೂತರ ಮುಖಾಂತರ ಕಳುಹಿಸಿದನು.</verse>
				<verse number="14">ಹಿಜ್ಕೀಯನು ಆ ದೂತರ ಕೈಯಿಂದ ಪತ್ರವನ್ನು ತೆಗೆದುಕೊಂಡು ಓದಿದನು, ಅನಂತರ ಯೆಹೋವ ದೇವರ ಆಲಯಕ್ಕೆ ಹೋಗಿ ಅದನ್ನು ಯೆಹೋವ ದೇವರ ಮುಂದೆ ತೆರೆದಿಟ್ಟನು.</verse>
				<verse number="15">ಇದಲ್ಲದೆ ಹಿಜ್ಕೀಯನು ಯೆಹೋವ ದೇವರ ಮುಂದೆ ಪ್ರಾರ್ಥನೆಮಾಡಿ ಹೇಳಿದ್ದೇನೆಂದರೆ,</verse>
				<verse number="16">“ಸೇನಾಧೀಶ್ವರ ಯೆಹೋವ ದೇವರೇ, ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ.</verse>
				<verse number="17">ಯೆಹೋವ ದೇವರೇ, ನಿಮ್ಮ ಕಿವಿಗೊಟ್ಟು ಕೇಳಿರಿ. ಯೆಹೋವ ದೇವರೇ, ನಿಮ್ಮ ಕಣ್ಣುಗಳನ್ನು ತೆರೆದು ನೋಡಿರಿ. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತುಗಳನ್ನು ಕೇಳಿರಿ.</verse>
				<verse number="18">“ಯೆಹೋವ ದೇವರೇ, ಅಸ್ಸೀರಿಯದ ಅರಸರು ಸಕಲ ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ, ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ.</verse>
				<verse number="19">ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ.</verse>
				<verse number="20">ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.</verse>
				<verse number="21">ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನೆಂದರೆ, “ನೀನು ಅಸ್ಸೀರಿಯದ ಅರಸನಾದ ಸನ್ಹೇರೀಬನನ್ನು ಕುರಿತು, ಇಸ್ರಾಯೇಲಿನ ಯೆಹೋವ ದೇವರಿಗೆ ಪ್ರಾರ್ಥನೆ ಮಾಡಿದ್ದನ್ನು ಕೇಳಿ,</verse>
				<verse number="22">ಅವನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: “ಕನ್ನಿಕೆಯಾದ ಚೀಯೋನ್ ಪುತ್ರಿಯು ನಿನ್ನನ್ನು ತಿರಸ್ಕರಿಸಿ, ನಿನಗೆ ಅಪಹಾಸ್ಯ ಮಾಡುತ್ತಾಳೆ. ಯೆರೂಸಲೇಮಿನ ಪುತ್ರಿಯು ನೀನು ಓಡಿ ಹೋಗುವಾಗ ತನ್ನ ತಲೆಯಾಡಿಸುತ್ತಾಳೆ.</verse>
				<verse number="23">ನೀನು ಯಾರನ್ನು ನಿಂದಿಸಿ ಯಾರನ್ನು ದೂಷಿಸಿದೆ? ಯಾರಿಗೆ ವಿರೋಧವಾಗಿ ನಿನ್ನ ಧ್ವನಿಯನ್ನು ಎತ್ತಿದ್ದೀ? ನಿನ್ನ ಕಣ್ಣುಗಳು ಗರ್ವದಿಂದ ನೋಡಿದ್ದು ಯಾರನ್ನು? ಇಸ್ರಾಯೇಲಿನ ಪರಿಶುದ್ಧ ದೇವರಿಗೆ ವಿರೋಧವಾಗಿಯಲ್ಲವೇ?</verse>
				<verse number="24">ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು, ‘ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಉನ್ನತವಾದ ಸ್ಥಳವನ್ನೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ.</verse>
				<verse number="25">ಪರದೇಶಗಳಲ್ಲಿ ನಾನು ಬಾವಿಗಳನ್ನು ಅಗೆದು, ನೀರು ಕುಡಿದಿದ್ದೇನೆ. ನನ್ನ ಅಂಗಾಲುಗಳಿಂದ ಈಜಿಪ್ಟಿನವರ ಎಲ್ಲಾ ನದಿಗಳನ್ನು ಬತ್ತಿಹೋಗುವಂತೆ ಮಾಡಿದ್ದೇನೆ, ಎಂದು ಕೊಚ್ಚಿಕೊಂಡಿದ್ದೀ.’</verse>
				<verse number="26">“ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ</verse>
				<verse number="27">ಆದ್ದರಿಂದ ಅವುಗಳ ನಿವಾಸಿಗಳು ಬಲಹೀನರಾಗಿ ಹೆದರಿ ಆಶಾಭಂಗಹೊಂದಿ ನಾಚಿಕೆಪಟ್ಟರು. ಅವರು ಹೊಲದ ಹುಲ್ಲಿನಂತೆಯೂ, ಹಸಿರು ಸಸಿಗಳಂತೆಯೂ, ಮಾಳಿಗೆಯ ಮೇಲಿನ ಹುಲ್ಲಿನಂತೆಯೂ, ಬೆಳೆಯುವುದಕ್ಕಿಂತ ಮುಂಚೆಯೇ ಬಾಡಿಹೋಗುವ ಪೈರಿನಂತೆಯೂ ಅವರಿದ್ದಾರೆ.</verse>
				<verse number="28">“ಆದರೆ ನೀನು ಎಲ್ಲಿ ವಾಸಿಸುವೆಯೆಂಬುದನ್ನು ನೀನು ಯಾವಾಗ ಬರುವೆ ಹೋಗುವೆ ಎಂಬುದನ್ನು ನೀನು ನನ್ನ ಮೇಲೆ ಹೇಗೆ ಕೋಪಿಸಿಕೊಳ್ಳುವೆ? ಎಂಬುದನ್ನು ನಾನು ಬಲ್ಲೆನು.</verse>
				<verse number="29">ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಿಗೆ ತಲುಪಿದೆ. ಆದ್ದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ; ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ, ನೀನು ಬಂದ ದಾರಿಯಿಂದಲೇ ನಿನ್ನನ್ನು ಹಿಂದಿರುಗಿಸುವೆನು.</verse>
				<verse number="30">“ಹಿಜ್ಕೀಯನೇ, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವುದೇ ನಿಮಗೆ ಸಂಕೇತವಾಗಿರುವದು.</verse>
				<verse number="31">ಯೆಹೂದದ ಮನೆತನದಲ್ಲಿ ತಪ್ಪಿಸಿಕೊಂಡು ಉಳಿದವರು ತಿರುಗಿ, ದೇಶದಲ್ಲಿ ಬೇರೂರಿ ನೆಲೆಗೊಂಡು ಅಭಿವೃದ್ಧಿಯಾಗುವರು.</verse>
				<verse number="32">ಏಕೆಂದರೆ ಯೆರೂಸಲೇಮಿನಿಂದ ಉಳಿದವರೂ, ಚೀಯೋನ್ ಪರ್ವತದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೇನಾಧೀಶ್ವರ ಯೆಹೋವ ದೇವರ ಆಸಕ್ತಿಯು ಇದನ್ನು ನೆರವೇರಿಸುವುದು.</verse>
				<verse number="33">“ಆದ್ದರಿಂದ ಯೆಹೋವ ದೇವರು ಅಸ್ಸೀರಿಯದ ಅರಸನನ್ನು ಕುರಿತು ಹೀಗೆ ಹೇಳುತ್ತಾರೆ: “ಅವನು ಈ ಪಟ್ಟಣದೊಳಗೆ ಬರುವುದಿಲ್ಲ. ಅಲ್ಲಿ ಬಾಣವನ್ನು ಎಸೆಯುವುದಿಲ್ಲ. ಗುರಾಣಿಯೊಂದಿಗೆ ಅದರ ಮುಂದೆ ಬರಲಾರನು. ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಲು ದಿಬ್ಬವನ್ನು ನಿರ್ಮಿಸುವುದಿಲ್ಲ.</verse>
				<verse number="34">ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು, ಈ ಪಟ್ಟಣದೊಳಗೆ ಬರುವುದೇ ಇಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="35">“ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.”</verse>
				<verse number="36">ಆಗ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.</verse>
				<verse number="37">ಆಗ ಅಸ್ಸೀರಿಯದ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.</verse>
				<verse number="38">ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಆಲಯದಲ್ಲಿ ಆರಾಧನೆ ಮಾಡುತ್ತಿರುವಾಗ, ಅವನ ಮಕ್ಕಳಾದ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಖಡ್ಗದಿಂದ ಕೊಂದು, ಅರಾರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗ ಏಸರ್‌ಹದ್ದೋನನು ಅವನಿಗೆ ಬದಲಾಗಿ ಅರಸನಾದನು.</verse>
			</chapter>
			<chapter number="38">
				<verse number="1">ಆ ದಿವಸಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನಾದ ಪ್ರವಾದಿ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನೀನು ನಿನ್ನ ಮನೆಯನ್ನು ವ್ಯವಸ್ಥೆ ಮಾಡಿಕೋ, ಏಕೆಂದರೆ ನೀನು ಬದುಕದೆ ಸಾಯುವೆ, ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದು ಹೇಳಿದನು.</verse>
				<verse number="2">ಆಗ ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ ಯೆಹೋವ ದೇವರನ್ನು ಪ್ರಾರ್ಥಿಸಿದನು.</verse>
				<verse number="3">“ಯೆಹೋವ ದೇವರೇ, ನಾನು ಸತ್ಯದಿಂದಲೂ, ಪೂರ್ಣಹೃದಯದಿಂದಲೂ ನಿಮ್ಮ ಮುಂದೆ ನಡೆದು, ನಿಮ್ಮ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿರಿ,” ಎಂದು ಬೇಡಿಕೊಂಡನು. ಹೀಗೆ ಹಿಜ್ಕೀಯನು ವ್ಯಥೆಪಟ್ಟು ಅತ್ತನು.</verse>
				<verse number="4">ಆಗ ಯೆಹೋವ ದೇವರ ವಾಕ್ಯವು ಯೆಶಾಯನಿಗೆ ಬಂದಿತು,</verse>
				<verse number="5">“ನೀನು ಹೋಗಿ ಹಿಜ್ಕೀಯನಿಗೆ ಹೀಗೆ ಹೇಳು, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಹೆಚ್ಚಾಗಿ ಕೂಡಿಸುತ್ತೇನೆ.</verse>
				<verse number="6">ನಿನ್ನನ್ನೂ ಈ ಪಟ್ಟಣವನ್ನೂ ಅಸ್ಸೀರಿಯದ ಅರಸನ ಕೈಯಿಂದ ಬಿಡಿಸುವೆನು. ಈ ಪಟ್ಟಣವನ್ನು ಕಾಪಾಡುವೆನು.</verse>
				<verse number="7">“ ‘ಯೆಹೋವ ದೇವರು ತಾವು ನುಡಿದದ್ದನ್ನು ನೆರವೇರಿಸುವರು ಎಂಬುದಕ್ಕೆ ಈ ಗುರುತನ್ನು ಕಾಣುವೆ.</verse>
				<verse number="8">ಇಗೋ, ಸೂರ್ಯನ ಇಳಿತವನ್ನು ಆಹಾಜನ ಸೋಪಾನ ಪಂಕ್ತಿಯಲ್ಲಿ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬರುವುದು,’ ” ಎಂದನು. ಅದರಂತೆಯೇ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂದಿತು.</verse>
				<verse number="9">ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಗುಣಹೊಂದಿದ ನಂತರ ಬರೆದದ್ದು:</verse>
				<verse number="10">“ನನ್ನ ಜೀವನದ ಮಧ್ಯಪ್ರಾಯದಲ್ಲೇ ನಾನು ಪಾತಾಳದ ದ್ವಾರದೊಳಗೆ ಹೋಗಬೇಕು. ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರುಷಗಳು ನನಗೆ ತಪ್ಪಿಹೋಯಿತು,” ಎಂದು ನಾನು ಅಂದುಕೊಂಡೆನು.</verse>
				<verse number="11">ನಾನು ಹೀಗೆ ಯೋಚಿಸಿದೆ, “ಯೆಹೋವ ದೇವರನ್ನು ಜೀವಿತರ ದೇಶದಲ್ಲಿ ಯೆಹೋವ ದೇವರನ್ನು ಕಾಣೆನೆಂದುಕೊಂಡೆನು; ಭೂಲೋಕ ನಿವಾಸಿಗಳಲ್ಲಿ ಒಬ್ಬ ಮನುಷ್ಯನನ್ನೂ ಕಾಣೆನೆಂದುಕೊಂಡೆನು.</verse>
				<verse number="12">ನನ್ನ ಆಶ್ರಯವು ಕುರುಬನ ಗುಡಾರದಂತೆ ಕಿತ್ತು ನನ್ನ ಕಡೆಯಿಂದ ಒಯ್ಯಲಾಗಿದೆ. ದೇವರು ನನ್ನ ಆಯುಷ್ಯದ ಹಾಸನ್ನು ಕತ್ತರಿಸಿದ್ದರಿಂದ ನೆಯಿಗೆಯವನಂತೆ ನನ್ನ ಜೀವಮಾನವನ್ನು ಸುತ್ತಿಬಿಟ್ಟಿದ್ದೇನೆ; ಹಗಲುರಾತ್ರಿ ದೇವರೇ, ನೀವು ನನ್ನನ್ನು ಅಂತ್ಯಗೊಳಿಸುತ್ತೀರಿ.</verse>
				<verse number="13">ಹೌದು, ದೇವರು ಸಿಂಹದಂತೆ ನನ್ನ ಎಲುಬುಗಳನ್ನೆಲ್ಲಾ ಮುರಿಯುತ್ತಿದ್ದರೂ, ಬೆಳಗಿನತನಕ ತಡೆದುಕೊಂಡೇ ಇದ್ದೆನು. ನೀವು ನನ್ನನ್ನು ಅಂತ್ಯಗೊಳಿಸುತ್ತೀರಲ್ಲಾ ಎಂದು ಹಗಲುರಾತ್ರಿ ಪ್ರಲಾಪಿಸಿದೆನು.</verse>
				<verse number="14">ನಾನು ಬಾನಕ್ಕಿಯಂತೆಯೂ, ಬಕದಂತೆಯೂ ಕೀಚುಗುಟ್ಟಿದೆನು. ಪಾರಿವಾಳದಂತೆ ಗುಬ್ಬಳಿಸುತ್ತಿದ್ದೆನು. ನನ್ನ ಕಣ್ಣುಗಳು ಮೇಲಕ್ಕೆ ನೋಡುವುದರಿಂದ ಕ್ಷೀಣವಾದವು. ಕರ್ತದೇವರೇ, ನಾನು ಬಾಧೆಪಡುತ್ತಿದ್ದೇನೆ, ನೀವು ನನಗೆ ಆಶ್ರಯರಾಗಿರಿ.”</verse>
				<verse number="15">ಆದರೆ, ನಾನು ಏನು ಹೇಳಲಿ, ಆತನು ನನಗೆ ಮಾತುಕೊಟ್ಟು, ತಾನೇ ಅದನ್ನು ನೆರವೇರಿಸಿದ್ದಾನೆ. ನನ್ನ ಆತ್ಮಕ್ಕೆ ಸಂಭವಿಸಿದ ದುಃಖದಲ್ಲಿ ನನ್ನ ವರುಷಗಳಲ್ಲೆಲ್ಲಾ ವಿನಯದಿಂದ ನಡೆಯುವೆನು.</verse>
				<verse number="16">ಕರ್ತದೇವರೇ, ಇಂಥಾ ಸಂಬಂಧಗಳಿಂದ ಮನುಷ್ಯರು ಬದುಕುತ್ತಾರೆ. ಇವೆಲ್ಲವುಗಳಿಂದಲೇ ನನ್ನ ಆತ್ಮದಲ್ಲಿ ಜೀವವುಂಟು. ಹೀಗೆ ನನ್ನನ್ನು ನೀವು ಸ್ವಸ್ಥಮಾಡಿ ಬದುಕುವಂತೆ ಮಾಡಿದಿರಿ.</verse>
				<verse number="17">ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು. ಆದರೆ ನನ್ನ ಆತ್ಮವನ್ನು ನಾಶದಿಂದ ಬಿಡುಗಡೆ ಮಾಡಿದ್ದು ನಿಮ್ಮ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.</verse>
				<verse number="18">ಸಮಾಧಿಯು ನಿನ್ನನ್ನು ಹೊಗಳುವುದಿಲ್ಲ. ಮರಣವು ನಿನ್ನನ್ನು ಕೊಂಡಾಡುವುದಿಲ್ಲ. ಕುಣಿಯೊಳಕ್ಕೆ ಹೋಗುವವರು ನಿಮ್ಮ ಸತ್ಯತೆಯಲ್ಲಿ ಭರವಸವಿಡಲಾರರು.</verse>
				<verse number="19">ಜೀವಂತನು; ಜೀವಂತನೇ ನಿನ್ನನ್ನು ಸ್ತುತಿಸುವೆನು. ಹೌದು, ಜೀವಂತನಾದ ನಾನೇ ಈ ಹೊತ್ತು ನಿಮ್ಮನ್ನು ಹೊಗಳುವೆನು. ತಂದೆಯು ಮಕ್ಕಳಿಗೆ ನಿಮ್ಮ ನಿಷ್ಠೆಯನ್ನು ಬೋಧಿಸುವನು.</verse>
				<verse number="20">ಯೆಹೋವ ದೇವರು ನನ್ನನ್ನು ರಕ್ಷಿಸುವರು. ಆದ್ದರಿಂದ ಯೆಹೋವ ದೇವರ ಆಲಯದಲ್ಲಿ ನಮ್ಮ ಜೀವಮಾನದ ದಿವಸಗಳಲ್ಲೆಲ್ಲಾ ತಂತಿವಾದ್ಯಗಳಿಂದ ನಮ್ಮ ಹಾಡುಗಳನ್ನು ನಾವು ಹಾಡುವೆವು.</verse>
				<verse number="21">“ಅಂಜೂರದ ಹಣ್ಣುಗಳ ಉಂಡೆಯನ್ನು ತರಿಸಿ, ಹುಣ್ಣಿನ ಮೇಲೆ ಇಟ್ಟರೆ, ಅವನು ಗುಣಹೊಂದುವನು,” ಎಂದು ಯೆಶಾಯನು ಹೇಳಿದನು.</verse>
				<verse number="22">ಇದಲ್ಲದೆ ಹಿಜ್ಕೀಯನು, “ನಾನು ಯೆಹೋವ ದೇವರ ಆಲಯಕ್ಕೆ ಹೋಗುವೆನೆಂಬುದಕ್ಕೆ ನನಗೆ ಗುರುತೇನು?” ಎಂದು ಕೇಳಿದ್ದನು.</verse>
			</chapter>
			<chapter number="39">
				<verse number="1">ಅದೇ ಕಾಲದಲ್ಲಿ ಬಲದಾನನ ಮಗನೂ, ಬಾಬಿಲೋನಿನ ಅರಸನೂ ಆದ ಮೆರೋದಕ್ ಬಲದಾನ್ ಎಂಬವನು, ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿದ್ದರಿಂದ ಪತ್ರಗಳನ್ನೂ, ಉಡುಗೊರೆಗಳನ್ನೂ ಕಳುಹಿಸಿದನು.</verse>
				<verse number="2">ಹಿಜ್ಕೀಯನು ಅದಕ್ಕೆ ಸಂತೋಷಪಟ್ಟು ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳ ತೈಲ ಮೊದಲಾದ ಅಮೂಲ್ಯ ಪದಾರ್ಥಗಳಿರುವ ಮನೆಯನ್ನೂ, ಆಯುಧ ಶಾಲೆಯನ್ನೂ, ತನ್ನ ಭಂಡಾರದಲ್ಲಿ ಇರುವುದೆಲ್ಲವನ್ನೂ ತೋರಿಸಿದನು. ಹೀಗೆ ಹಿಜ್ಕೀಯನು ತನ್ನ ಅರಮನೆಯಲ್ಲಿಯೂ, ತನ್ನ ಸಮಸ್ತ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.</verse>
				<verse number="3">ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಆ ಮನುಷ್ಯರು ಎಲ್ಲಿಂದ ಬಂದವರು ಮತ್ತು ಅವರು ನಿನಗೆ ಏನು ಹೇಳಿದರು?” ಎಂದು ಕೇಳಿದನು. ಹಿಜ್ಕೀಯನು, “ಅವರು ಬಹುದೂರ ದೇಶವಾದ ಬಾಬಿಲೋನಿನಿಂದ ನನ್ನ ಬಳಿಗೆ ಬಂದವರು,” ಎಂದು ಹೇಳಿದನು.</verse>
				<verse number="4">ಅದಕ್ಕೆ ಯೆಶಾಯನು ಪುನಃ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನನ್ನು ನೋಡಿದರು?” ಎಂದು ಕೇಳಿದನು. ಹಿಜ್ಕೀಯನು, “ನನ್ನ ಅರಮನೆಯಲ್ಲಿ ಇರುವುದೆಲ್ಲವನ್ನು ಅವರು ನೋಡಿದರು, ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಏನೂ ಇಲ್ಲ,” ಎಂದು ಉತ್ತರಕೊಟ್ಟನು.</verse>
				<verse number="5">ಆಗ ಯೆಶಾಯನು ಹಿಜ್ಕೀಯನಿಗೆ, “ಸೇನಾಧೀಶ್ವರ ಯೆಹೋವ ದೇವರ ವಾಕ್ಯವನ್ನು ಕೇಳು.</verse>
				<verse number="6">ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ನಿನ್ನ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಕೊಂಡೊಯ್ಯುವ ದಿವಸ ಬರುವುದು. ಇಲ್ಲಿ ಏನೂ ಉಳಿಯುವುದಿಲ್ಲ ಎಂದು ಯೆಹೋವ ದೇವರು ಹೇಳಿದರು.</verse>
				<verse number="7">ಬಾಬಿಲೋನಿನವರು ನಿನ್ನಿಂದ ಹುಟ್ಟುವಂಥ, ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು, ಅವರು ಬಾಬಿಲೋನಿನ ರಾಜನ ಅರಮನೆಯಲ್ಲಿ ಕಂಚುಕಿಗಳಾಗಿರುವರು,” ಎಂದನು.</verse>
				<verse number="8">ಆಗ ಹಿಜ್ಕೀಯನು, “ಹೇಗೂ ನನ್ನ ಜೀವಮಾನದಲ್ಲಿ ಸಮಾಧಾನವು, ಭದ್ರತೆಯೂ ಇರುವುವು,” ಎಂದುಕೊಂಡು ಯೆಶಾಯನಿಗೆ, “ನೀನು ಹೇಳಿದ ಯೆಹೋವ ದೇವರ ವಾಕ್ಯವು ಒಳ್ಳೆಯದೇ!” ಎಂದನು.</verse>
			</chapter>
			<chapter number="40">
				<verse number="1">ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾರೆ.</verse>
				<verse number="2">ಯೆರೂಸಲೇಮಿನ ಸಂಗಡ ನೀವು ಮೃದುವಾಗಿ ಮಾತನಾಡಿರಿ. ಅದರ ಕಠಿಣ ಸೇವೆ ತೀರಿತೆಂದೂ, ಅದರ ಪಾಪಕ್ಕೆ ಪ್ರಾಯಶ್ಚಿತ್ತವಾಗಿದೆ, ಎಂದು ಘೋಷಿಸಿರಿ, ಏಕೆಂದರೆ ಅದು ಎಲ್ಲಾ ಪಾಪಗಳಿಗೂ ಯೆಹೋವ ದೇವರ ಕೈಯಿಂದ ಎರಡರಷ್ಟು ಹೊಂದಿದ್ದಾಯಿತು.</verse>
				<verse number="3">“ಮರುಭೂಮಿಯಲ್ಲಿ ಯೆಹೋವ ದೇವರ ಮಾರ್ಗವನ್ನು ಸಿದ್ಧಮಾಡಿರಿ. ಅರಣ್ಯದಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ನೆಟ್ಟಗೆಮಾಡಿರಿ.</verse>
				<verse number="4">ಪ್ರತಿಯೊಂದು ಹಳ್ಳಕೊಳ್ಳಗಳನ್ನು ಮಟ್ಟಮಾಡಬೇಕು. ಎಲ್ಲಾ ಬೆಟ್ಟಗುಡ್ಡಗಳು ನೆಲಸಮವಾಗಬೇಕು. ಒರಟಾದ ನೆಲವು ಸಮವಾಗಬೇಕು.</verse>
				<verse number="5">ಆಗ ಯೆಹೋವ ದೇವರ ಮಹಿಮೆಯು ಗೋಚರವಾಗುವುದು. ಮಾನವರೆಲ್ಲರೂ ಒಟ್ಟಿಗೆ ಅದನ್ನು ಕಾಣುವರು. ಏಕೆಂದರೆ ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.”</verse>
				<verse number="6">ವಾಣಿಯು, “ಗಟ್ಟಿಯಾಗಿ ಕೂಗು,” ಎಂದಿತು. ಅದಕ್ಕೆ, “ನಾನು ಏನೆಂದು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಅವರ ಸೊಬಗೆಲ್ಲಾ ಹೊಲದ ಹೂವಿನಂತಿದೆ,</verse>
				<verse number="7">ಯೆಹೋವ ದೇವರ ಶ್ವಾಸವು ಅದರ ಮೇಲೆ ಬೀಸುವುದರಿಂದ, ಹುಲ್ಲು ಒಣಗಿಹೋಗುವುದು. ಹೂವು ಉದುರಿ ಹೋಗುವುದು. ಮಾನವರೆಲ್ಲರೂ ಹುಲ್ಲೇ ಆಗಿದ್ದಾರೆ.</verse>
				<verse number="8">ಹುಲ್ಲು ಒಣಗಿಹೋಗುವುದು, ಹೂವು ಬಾಡಿಹೋಗುವುದು. ಆದರೆ ನಮ್ಮ ದೇವರ ವಾಕ್ಯವಾದರೋ ಸದಾಕಾಲ ಇರುವುದು,” ಎಂದು ಉತ್ತರವಾಯಿತು.</verse>
				<verse number="9">ಶುಭಸಮಾಚಾರವನ್ನು ತಿಳಿಸುವ ಚೀಯೋನೇ, ನೀನು ಉನ್ನತ ಪರ್ವತವನ್ನು ಏರು. ಶುಭಸಮಾಚಾರವನ್ನು ತಿಳಿಸುವ ಯೆರೂಸಲೇಮೇ, ಬಲವಾಗಿ ನಿನ್ನ ಧ್ವನಿ ಎತ್ತು, ಭಯಪಡಬೇಡ. ಯೆಹೂದದ ಪಟ್ಟಣಗಳಿಗೆ, “ಇಗೋ, ನಿನ್ನ ದೇವರು!” ಎಂದು ಹೇಳು.</verse>
				<verse number="10">ಇಗೋ, ಸಾರ್ವಭೌಮ ಯೆಹೋವ ದೇವರು ಬಲದೊಂದಿಗೆ ಬರುವರು. ಅವರ ತೋಳು ತಮಗೋಸ್ಕರ ಆಳುವುದು. ಅವರ ಬಹುಮಾನವು ಅವರ ಸಂಗಡ ಅವರ ಪ್ರತಿಫಲವು ಅವರ ಮುಂದೆಯೂ ಇದೆ.</verse>
				<verse number="11">ಅವರು ತಮ್ಮ ಮಂದೆಯನ್ನು ಕುರುಬನಂತೆ ಮೇಯಿಸುವರು. ಕುರಿಮರಿಗಳನ್ನು ಕೂಡಿಸಿ, ಅವುಗಳನ್ನು ತಮ್ಮ ಎದೆಗಪ್ಪಿಕೊಳ್ಳುವರು, ಎಳೆಯ ಮರಿಗಳನ್ನು ಮೆಲ್ಲಗೆ ನಡಿಸುವರು.</verse>
				<verse number="12">ಸಮುದ್ರದ ನೀರನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ, ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ, ಭೂಮಿಯ ಧೂಳನ್ನು ಅಳತೆಮಾಡಿ ತಿಳಿದುಕೊಂಡವನೂ, ಬೆಟ್ಟಗಳ ಮಟ್ಟವನ್ನೂ, ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನೂ ಯಾರು?</verse>
				<verse number="13">ಯೆಹೋವ ದೇವರ ಮನಸ್ಸನ್ನು ಅರ್ಥ ಮಾಡಿಕೊಂಡವನು ಯಾರು? ಸಲಹೆಗಾರನಾಗಿ ಅವರಿಗೆ ಬೋಧಿಸಿದವನು ಯಾರು?</verse>
				<verse number="14">ತನಗೆ ಜ್ಞಾನ ದೊರೆಯಲು ಯೆಹೋವ ದೇವರು ಯಾರ ವಿಚಾರ ತೆಗೆದುಕೊಂಡನು. ಆತನಿಗೆ ಸರಿಯಾದ ಮಾರ್ಗವನ್ನು ಕಲಿಸಿದವನು ಯಾರು? ಆತನಿಗೆ ಜ್ಞಾನವನ್ನು ಕಲಿಸಿದವನಾರು ಇಲ್ಲವೆ ತಿಳುವಳಿಕೆಯ ಮಾರ್ಗವನ್ನು ಆತನಿಗೆ ತೋರಿಸಿದವನಾರು?</verse>
				<verse number="15">ಇಗೋ, ಆತನ ಎಣಿಕೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದುರುವ ತುಂತುರಿನಂತೆಯೂ, ತಕ್ಕಡಿಯಲ್ಲಿನ ಧೂಳಿನ ಹಾಗೂ ಇರುತ್ತವೆ. ದ್ವೀಪಗಳನ್ನು ಅಣುರೇಣುವಿನಂತೆ ಆತನು ಎತ್ತುತ್ತಾನೆ.</verse>
				<verse number="16">ಲೆಬನೋನು ಯಜ್ಞವೇದಿಯ ಬೆಂಕಿಗೆ ಸಾಲದು: ಅದರ ಪ್ರಾಣಿಗಳು ದಹನಬಲಿಗಳಿಗೆ ಸಾಧನವು.</verse>
				<verse number="17">ಸಕಲ ಜನಾಂಗಗಳು ಆತನ ಮುಂದೆ ಏನೂ ಇಲ್ಲದಂತಿವೆ. ಅವು ಆತನ ಎಣಿಕೆಯಲ್ಲಿ ಶೂನ್ಯವಾಗಿಯೂ, ವ್ಯರ್ಥವಾಗಿಯೂ ಇವೆ.</verse>
				<verse number="18">ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ?</verse>
				<verse number="19">ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ. ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ, ಬೆಳ್ಳಿಯ ಸರಪಣಿಗಳನ್ನು ಹಾಕುವನು.</verse>
				<verse number="20">ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು ಹುಳಿತುಹೋಗದ ಮರವನ್ನು ಹುಡುಕಿ, ಬಾಗಿಬೀಳದ ವಿಗ್ರಹವನ್ನು ತಯಾರಿಸುವುದಕ್ಕೆ ಶಿಲ್ಪಿಯನ್ನು ವಿಚಾರಿಸಿಕೊಳ್ಳುವನು.</verse>
				<verse number="21">ನಿಮಗೆ ತಿಳಿದಿಲ್ಲವೋ? ನೀವು ಕೇಳಲಿಲ್ಲವೋ? ಆದಿಯಿಂದಲೇ ನಿಮಗೆ ತಿಳಿದಿಲ್ಲವೋ? ಭೂಮಿಯು ಸ್ಥಾಪಿತವಾದಂದಿನಿಂದ ನಿಮಗೆ ಅರ್ಥವಾಗಲಿಲ್ಲವೋ?</verse>
				<verse number="22">ಆಕಾಶಮಂಡಲವನ್ನು ತೆರೆಯಂತೆ ವಿಸ್ತರಿಸಿ, ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ, ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.</verse>
				<verse number="23">ಅದು ದೇಶಾಧಿಪತಿಗಳನ್ನು ನಿರ್ನಾಮ ಮಾಡುತ್ತದೆ, ಭೂಮಿಯ ನ್ಯಾಯಾಧಿಪತಿಗಳನ್ನು ಶೂನ್ಯವಾಗುವಂತೆ ಮಾಡುತ್ತದೆ.</verse>
				<verse number="24">ಇವರು ನೆಟ್ಟಕೂಡಲೇ, ಬಿತ್ತಿದಾಕ್ಷಣವೇ, ಭೂಮಿಯಲ್ಲಿ ಬೇರೂರಿದಾಗಲೇ, ಆತನ ಶ್ವಾಸವನ್ನು ಇವರ ಮೇಲೆ ಊದಿದಾಗಲೇ ಒಣಗಿ ಹೋಗುವರು. ಬಿರುಗಾಳಿಯು ಇವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವುದು.</verse>
				<verse number="25">ಹೀಗಿರಲು, “ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನ ಮಾಡುತ್ತೀರಿ?” ಎಂದು ಪರಿಶುದ್ಧ ದೇವರು ಕೇಳುತ್ತಾರೆ.</verse>
				<verse number="26">ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ. ಇಗೋ, ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? ಆತನೇ ತನ್ನ ಮಹಾಶಕ್ತಿಯಿಂದಲೂ, ಅವುಗಳ ಸೈನ್ಯವನ್ನೆಲ್ಲಾ ಲೆಕ್ಕ ಮಾಡಿ ಹೊರಗೆ ತರುವನು. ಏಕೆಂದರೆ ಆತನು ಅತಿ ಬಲಾಢ್ಯನೂ ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ತಪ್ಪದು.</verse>
				<verse number="27">ನನ್ನ ಮಾರ್ಗವು ಯೆಹೋವ ದೇವರಿಗೆ ಮರೆಯಾಗಿದೆ. ನನ್ನ ನ್ಯಾಯವು ನನ್ನ ದೇವರಿಂದ ದಾಟಿಹೋಯಿತಲ್ಲಾ! ಎಂದು ಯಾಕೋಬೇ ಏಕೆ ಹೇಳುತ್ತೀ? ಇಸ್ರಾಯೇಲೇ ಏಕೆ ಮಾತನಾಡುತ್ತೀ?</verse>
				<verse number="28">ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಯೆಹೋವ ದೇವರು ನಿರಂತರವಾದ ದೇವರೂ, ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವುದಿಲ್ಲ, ಬಳಲುವುದಿಲ್ಲ, ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.</verse>
				<verse number="29">ಆತನು ದಣಿದವನಿಗೆ ಶಕ್ತಿಯನ್ನೂ, ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ.</verse>
				<verse number="30">ಯೌವನಸ್ಥರೋ ದಣಿದು ಬಳಲುವರು ಮತ್ತು ತರುಣರು ಸಂಪೂರ್ಣವಾಗಿ ಬೀಳುವರು.</verse>
				<verse number="31">ಆದರೆ ಯೆಹೋವ ದೇವರನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು. ಅವರು ಹದ್ದುಗಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಅವರು ಓಡಿ ದಣಿಯರು. ನಡೆದು ಬಳಲರು.</verse>
			</chapter>
			<chapter number="41">
				<verse number="1">ದ್ವೀಪಗಳೇ, ನನ್ನ ಮುಂದೆ ಮೌನದಿಂದಿರಿ. ರಾಷ್ಟ್ರಗಳು ತಮ್ಮ ಬಲವನ್ನು ನವೀಕರಿಸಲಿ! ಅವರು ನನ್ನ ಸಮೀಪಕ್ಕೆ ಬಂದು ಮಾತನಾಡಲಿ. ನ್ಯಾಯಸ್ಥಾನಕ್ಕೆ ಸಮೀಪಕ್ಕೆ ಒಟ್ಟಾಗಿ ಬರೋಣ.</verse>
				<verse number="2">ಪೂರ್ವದಿಂದ ನೀತಿವಂತನನ್ನು ಎಬ್ಬಿಸಿ, ಅವನನ್ನು ತನ್ನ ಪಾದಸನ್ನಿಧಿಗೆ ಕರೆದು, ರಾಷ್ಟ್ರಗಳನ್ನು ಅವನ ಮುಂದೆ ಕೊಟ್ಟುಬಿಟ್ಟು, ಅವನನ್ನು ರಾಜರ ಮೇಲೆ ಆಳುವುದಕ್ಕೆ ಮಾಡಿದವನು ಯಾರು? ಅವನ ಖಡ್ಗವನ್ನು ಧೂಳನ್ನಾಗಿಯೂ, ಅವನ ಬಿಲ್ಲನ್ನು ಹಾರಿಹೋಗುವ ಹೊಟ್ಟಿನಂತೆಯೂ ಅವರನ್ನು ಕೊಟ್ಟನು.</verse>
				<verse number="3">ತಾನು ಎಂದೂ ಹೆಜ್ಜೆ ಇಡದ ಮಾರ್ಗದಲ್ಲಿ ಸುರಕ್ಷಿತವಾಗಿ ಆತನು ಅವರನ್ನು ಹಿಂದಟ್ಟುತ್ತಾ ಹೋದನು.</verse>
				<verse number="4">ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನೂ ಆದಿಯಿಂದ ತಲತಲಾಂತರಗಳನ್ನು ಬರಮಾಡಿದವನು ಯಾರು? ಯೆಹೋವ ಎಂಬ ನಾನೇ ಮೊದಲನೆಯವನು, ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.</verse>
				<verse number="5">ದ್ವೀಪಗಳೆಲ್ಲವೂ ಕಂಡು ಬೆರಗಾದವು. ಭೂಮಿಯ ಕಟ್ಟಕಡೆಯು ನಡುಗಿತು. ಅವರು ಸಮೀಪಕ್ಕೆ ಬಂದರು.</verse>
				<verse number="6">ಪ್ರತಿಯೊಬ್ಬನು ತನ್ನ ನೆರೆಯವನಿಗೆ ಸಹಾಯ ಮಾಡಲಿ. ಪ್ರತಿಯೊಬ್ಬನು ತನ್ನ ಸಹೋದರನಿಗೆ, “ಧೈರ್ಯವಾಗಿರಿ!” ಎಂದು ಹೇಳಲಿ.</verse>
				<verse number="7">ಹಾಗೆಯೇ ಶಿಲ್ಪಿಯು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು. ಸುತ್ತಿಗೆಯಿಂದ ಸಮಮಾಡುವವನು ಅಡಿಗಲ್ಲಿನ ಮೇಲೆ ತಟ್ಟುವವನನ್ನು ಉತ್ತೇಜಿಸಿದನು. ಬೆಸುಗೆ “ಚೆನ್ನಾಗಿದೆ” ಎಂದು ಹೇಳಿ, ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು.</verse>
				<verse number="8">“ಆದರೆ ನನ್ನ ಸೇವಕನಾದ ಇಸ್ರಾಯೇಲೇ, ನಾನು ಆಯ್ದುಕೊಂಡ ಯಾಕೋಬೇ, ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ,</verse>
				<verse number="9">ನಿನ್ನನ್ನು ಭೂಮಿಯ ಕಟ್ಟಕಡೆಗಳಿಂದ ಆರಿಸಿಕೊಂಡು, ಅದರ ದೂರದ ಕೊನೆಯಿಂದ ಕರೆದು, ‘ನೀನು ನನ್ನ ಸೇವಕನು,’ ನಿನ್ನನ್ನು ನಾನು ಆಯ್ದುಕೊಂಡಿದ್ದೇನೆ. ನಿನ್ನನ್ನು ತಳ್ಳಿಬಿಡುವುದಿಲ್ಲ.</verse>
				<verse number="10">ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.</verse>
				<verse number="11">“ನಿನಗೆ ವಿರೋಧವಾಗಿ ಉರಿಗೊಂಡವರೆಲ್ಲರೂ ಅವಮಾನ ಹೊಂದಿ, ಆಶಾಭಂಗಪಡುವರು. ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು.</verse>
				<verse number="12">ನಿನ್ನೊಡನೆ ಹೋರಾಡಿದವರನ್ನು ಹುಡುಕಿದವರೂ ಅವರು ನಿನಗೆ ಕಾಣಿಸರು. ನಿನ್ನ ಸಂಗಡ ಯುದ್ಧ ಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು.</verse>
				<verse number="13">ನೀನಂತೂ ಹೆದರಬೇಡ; ಏಕೆಂದರೆ ಯೆಹೋವ ದೇವರಾದ ನಾನೇ ನಿನಗೆ ಸಹಾಯ ಮಾಡುತ್ತೇನೆ, ನಿನ್ನ ದೇವರಾಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ!</verse>
				<verse number="14">ಹುಳುವಿನಂತಿರುವ ಯಾಕೋಬೇ, ಪುಟ್ಟ ಇಸ್ರಾಯೇಲೇ, ಭಯಪಡಬೇಡ. ನಾನೇ ನಿನಗೆ ಸಹಾಯ ಮಾಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾರಲ್ಲಾ!</verse>
				<verse number="15">ಇಗೋ, ನಿನ್ನನ್ನು ಹದವಾದ, ಹೊಸ ಮೊನೆಹಲ್ಲಿನ ಹಂತೀಕುಂಟೆಯನ್ನಾಗಿ ಮಾಡುವೆನು. ನೀನು ಬೆಟ್ಟಗಳನ್ನು ಹೊಕ್ಕು, ಪುಡಿಪುಡಿಮಾಡಿ, ಗುಡ್ಡಗಳನ್ನು ಹೊಟ್ಟಿನಂತೆ ಮಾಡುವೆ.</verse>
				<verse number="16">ನೀನು ಅವುಗಳನ್ನು ತೂರಲು, ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವುದು. ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. ನೀನಂತೂ ಯೆಹೋವ ದೇವರಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧರಲ್ಲಿ ಮಹಿಮೆ ಹೊಂದುವೆ.</verse>
				<verse number="17">ಬಡವರೂ ದರಿದ್ರರೂ ನೀರನ್ನು ಹುಡುಕಿ ಕಾಣದೇ, ಬಾಯಾರಿಕೆಯಿಂದ ನಾಲಿಗೆ ಒಣಗಿದಾಗ, ಯೆಹೋವನಾದ ನಾನೇ ಅವರಿಗೆ ಉತ್ತರಕೊಡುವೆನು. ಇಸ್ರಾಯೇಲ್ ದೇವರಾಗಿರುವ ನಾನು ಅವರನ್ನು ಕೈಬಿಡೆನು.</verse>
				<verse number="18">ಎತ್ತರವಾದ ಸ್ಥಳಗಳಲ್ಲಿ ನದಿಗಳನ್ನು ತಗ್ಗುಗಳ ಮಧ್ಯದಲ್ಲಿ ಬುಗ್ಗೆಗಳನ್ನು ಹೊರಡಿಸಿ, ಮರುಭೂಮಿಯನ್ನು ನೀರಿನ ಕೆರೆಯನ್ನಾಗಿಯೂ, ಒಣನೆಲವನ್ನು ನೀರಿನ ಒರತೆಗಳನ್ನಾಗಿಯೂ ಮಾಡುವೆನು.</verse>
				<verse number="19">ಮರುಭೂಮಿಯಲ್ಲಿ ದೇವದಾರು, ಜಾಲೀಮರ, ಸುಗಂಧ, ಓಲಿವ್ ಮರಗಳನ್ನು ನಾನು ನೆಡುವೆನು. ಮರುಭೂಮಿಯಲ್ಲಿ ತುರಾಯಿ, ತಪಸಿ, ತಿಲಕ ವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.</verse>
				<verse number="20">ಆಗ ಯೆಹೋವ ದೇವರ ಹಸ್ತವು ಇದನ್ನು ಮಾಡಿದೆ ಎಂದೂ, ಇಸ್ರಾಯೇಲಿನ ಪರಿಶುದ್ಧನು ಇದನ್ನು ಸೃಷ್ಟಿಸಿದನು ಎಂದೂ ಅವರು ಕಂಡು ತಿಳಿದು, ಮನಸ್ಸಿಗೆ ಗ್ರಹಿಸಿಕೊಳ್ಳುವರು.</verse>
				<verse number="21">“ನಿಮ್ಮ ವ್ಯಾಜ್ಯವನ್ನು ತನ್ನಿರಿ” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಬಲವಾದ ನ್ಯಾಯಗಳನ್ನು ತನ್ನಿರಿ,” ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ.</verse>
				<verse number="22">“ವಿಗ್ರಹಗಳೇ, ಮುಂದೆ ಏನಾಗಲಿದೆ ಎಂದು ನಮಗೆ ಹೇಳಿ. ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು, ಅವುಗಳ ಪರಿಣಾಮವನ್ನು ಇಲ್ಲವೆ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು.</verse>
				<verse number="23">ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ. ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡಿರಿ.</verse>
				<verse number="24">ನೀವು ಶೂನ್ಯವೇ, ನಿಮ್ಮ ಕಾರ್ಯವು ವ್ಯರ್ಥವೇ. ನಿಮ್ಮನ್ನು ಆರಿಸಿಕೊಂಡವನು ಅಸಹ್ಯನೇ.</verse>
				<verse number="25">“ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇ. ಸೂರ್ಯೋದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸುವನು. ಅವನು ಜೇಡಿ ಮಣ್ಣಿನಂತೆಯೂ, ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಅವನು ಬರುವನು.</verse>
				<verse number="26">ಆತನು ನೀತಿವಂತನೆಂದು ನಾನು ತಿಳಿಯುವಂತೆ ಮತ್ತು ಹೇಳುವಂತೆ, ಆದಿಯಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಹೌದು, ಯಾರೂ ತೋರಿಸುವವನಿಲ್ಲ, ತಿಳಿಸುವವನು ಒಬ್ಬನೂ ಇಲ್ಲ. ನಿಮ್ಮ ಮಾತುಗಳು ಯಾರ ಕಿವಿಗೂ ಬೀಳುವುದಿಲ್ಲ.</verse>
				<verse number="27">ನಾನು ಮೊದಲನೆಯವನಾಗಿ ಚೀಯೋನಿಗೆ, ‘ಇಗೋ, ಅವರನ್ನು ನೋಡು’ ಎಂದು ಹೇಳಿ, ಶುಭಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.</verse>
				<verse number="28">ನಾನು ನೋಡಿದಾಗ, ಅಲ್ಲಿ ಯಾರೂ ಇಲ್ಲ. ನಾನು ಅವರನ್ನು ಕೇಳುವ ಪ್ರಶ್ನೆಗೆ, ಅವರಲ್ಲಿ ಒಂದು ಮಾತನ್ನು ಉತ್ತರಿಸುವ ಸಲಹೆಗಾರನು ಇಲ್ಲವೇ ಇಲ್ಲ.</verse>
				<verse number="29">ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.”</verse>
			</chapter>
			<chapter number="42">
				<verse number="1">“ಇಗೋ, ನನ್ನ ಸೇವಕನು. ಇವನಿಗೆ ನಾನೇ ಆಧಾರ, ನಾನು ಆಯ್ದುಕೊಂಡವನಲ್ಲಿ ನನ್ನ ಆತ್ಮವು ಆನಂದಿಸುವುದು; ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಇತರ ಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.</verse>
				<verse number="2">ಅವನು ಕೂಗುವುದಿಲ್ಲ, ಶಬ್ದವನ್ನು ಎತ್ತುವುದಿಲ್ಲ, ಬೀದಿಗಳಲ್ಲಿ ತನ್ನ ಧ್ವನಿಯನ್ನು ಕೇಳಗೊಡಿಸುವುದಿಲ್ಲ.</verse>
				<verse number="3">ಜಜ್ಜಿದ ದಂಟನ್ನು ಮುರಿದು ಹಾಕದೆ, ಕಳೆಗುಂದಿದ ದೀಪವನ್ನು ನಂದಿಸದೆ, ನಂಬಿಕೆಯಿಂದ ನ್ಯಾಯವನ್ನು ಹೊರತರುತ್ತಾನೆ.</verse>
				<verse number="4">ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಈತನು ಬಿಟ್ಟುಕೊಡುವುದಿಲ್ಲ, ಮನಗುಂದುವುದಿಲ್ಲ, ದ್ವೀಪಗಳು ಈತನ ಬೋಧನೆಗೆ ಎದುರುನೋಡುವುವು.”</verse>
				<verse number="5">ಆಕಾಶವನ್ನು ನಿರ್ಮಿಸಿ ಹಾಸಿದವನು ಭೂಮಿಯನ್ನೂ, ಅದರಿಂದ ಉತ್ಪತ್ತಿಯನ್ನೂ ವಿಸ್ತರಿಸಿ, ಅದರ ಮೇಲಿರುವ ಜನರಿಗೆ ಶ್ವಾಸವನ್ನೂ, ಅದರಲ್ಲಿ ಸಂಚರಿಸುವವರಿಗೆ ಆತ್ಮವನ್ನೂ ಕೊಡುತ್ತೇನೆಂದು ದೇವರಾದ ಯೆಹೋವ ದೇವರು ಹೇಳುತ್ತಾರೆ.</verse>
				<verse number="6">ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಸೆರೆಯವರನ್ನು ಸೆರೆಯಿಂದಲೂ, ಕತ್ತಲೆಯಲ್ಲಿ ವಾಸಿಸುವವರನ್ನು ಕಾರಾಗೃಹದಿಂದಲೂ ಹೊರತರಬೇಕು,”</verse>
				<verse number="7">ಎಂದು ಯೆಹೋವ ದೇವರಾಗಿರುವ ನಾನೇ ನಿನ್ನನ್ನು ನೀತಿಯಿಂದ ಕರೆದು, ನಿನ್ನ ಕೈಯನ್ನು ಹಿಡಿದು ಕಾಪಾಡಿ, ನಿನ್ನನ್ನು ಜನಗಳಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಇತರ ಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ.</verse>
				<verse number="8">ನಾನೇ ಯೆಹೋವ ದೇವರು, ಅದೇ ನನ್ನ ಹೆಸರು. ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಇಲ್ಲವೆ ನನ್ನ ಸ್ತುತಿಯನ್ನು ಎರಕದ ವಿಗ್ರಹಗಳಿಗೂ ಕೊಡೆನು.</verse>
				<verse number="9">ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ಹುಟ್ಟುವುದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ.</verse>
				<verse number="10">ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರಮಾಡಿರಿ.</verse>
				<verse number="11">ಮರುಭೂಮಿಯು, ಅದರ ಪಟ್ಟಣಗಳು ಘೋಷಿಸಲಿ. ಕೇದಾರ್ ಊರಿನ ನಿವಾಸಿಗಳು ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ. ಸೆಲ ಪಟ್ಟಣದವರೂ ಹರ್ಷಧ್ವನಿಗೈಯಲಿ; ಅವರು ಪರ್ವತದ ತುದಿಯಲ್ಲಿ ಆರ್ಭಟಿಸಲಿ.</verse>
				<verse number="12">ಅವರು ಯೆಹೋವ ದೇವರಿಗೆ ಮಹಿಮೆಯನ್ನು ಸಲ್ಲಿಸಲಿ! ಆತನ ಸ್ತೋತ್ರವನ್ನು ದ್ವೀಪಗಳಲ್ಲಿ ಪ್ರಕಟಿಸಲಿ.</verse>
				<verse number="13">ಯೆಹೋವ ದೇವರು ಪರಾಕ್ರಮಶಾಲಿಯಾಗಿ ಮುಂದೆ ಹೋಗುವರು; ಯುದ್ಧವೀರನ ಹಾಗೆ ತಮ್ಮ ರೌದ್ರವನ್ನು ಎಬ್ಬಿಸುವರು. ಆರ್ಭಟಿಸಿ ಗರ್ಜಿಸಿ ತಮ್ಮ ಶತ್ರುಗಳಿಗೆ ವಿರೋಧವಾಗಿ ಜಯಶಾಲಿಯಾಗುವರು.</verse>
				<verse number="14">“ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನು ಬಿಗಿಹಿಡಿದಿದ್ದೆನು. ಈಗ ನಾನು ಹೆರುವವಳಂತೆ ಕೂಗುವೆನು. ನಾನು ನಾಶಮಾಡಿ, ಒಂದೇ ಸಾರಿ ನುಂಗಿಬಿಡುವೆನು.</verse>
				<verse number="15">ನಾನು ಬೆಟ್ಟಗುಡ್ಡಗಳನ್ನು ನಾಶಮಾಡಿ, ಅಲ್ಲಿಯ ಮೇವನ್ನು ಒಣಗಿಸಿ; ನದಿಗಳನ್ನು ದ್ವೀಪಗಳನ್ನಾಗಿಯೂ, ಕೆರೆಗಳನ್ನು ಬತ್ತಿಹೋಗುವಂತೆಯೂ ಮಾಡುವೆನು.</verse>
				<verse number="16">ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡೆಸುವೆನು. ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ, ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವುದಿಲ್ಲ.</verse>
				<verse number="17">ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, ‘ನೀವೇ ನಮ್ಮ ದೇವರುಗಳು,’ ಎಂದು ಹೇಳುವವರು ಹಿಂದೆ ಬಿದ್ದು, ನಾಚಿಕೆಗೆ ಈಡಾಗುವರು.</verse>
				<verse number="18">“ಕಿವುಡರೇ, ಕೇಳಿರಿ; ಕುರುಡರೇ, ನೀವು ದೃಷ್ಟಿಸಿ ನೋಡಿರಿ.</verse>
				<verse number="19">ನನ್ನ ಸೇವಕನಲ್ಲದೆ ಕುರುಡನು ಯಾರು? ನಾನು ಕಳುಹಿಸಿದ ಸೇವಕನಲ್ಲದೆ ಕಿವುಡನು ಯಾರು? ಸಂಪೂರ್ಣನಂತೆ ಕುರುಡನು ಯಾರು? ಯೆಹೋವ ದೇವರ ಸೇವಕನಂತೆ ಕುರುಡನು ಯಾರು?</verse>
				<verse number="20">ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ, ನಿನಗೆ ಗಮನವಿಲ್ಲ. ಅವನ ಕಿವಿಗಳು ತೆರೆದಿದ್ದರೂ, ಕೇಳನು.”</verse>
				<verse number="21">ಯೆಹೋವ ದೇವರು ಆತನ ನೀತಿಗೋಸ್ಕರ ಬಹಳವಾಗಿ ಮೆಚ್ಚುವನು. ಆತನು ನಿಯಮವನ್ನು ಹೆಚ್ಚಿಸಿ, ಘನಪಡಿಸುವನು.</verse>
				<verse number="22">ಆದರೆ ಈ ಜನರೇ ಕೊಳ್ಳೆಗೆ ಈಡಾಗಿ ಸೂರೆ ಹೋಗಿದ್ದಾರೆ. ಅವರೆಲ್ಲರೂ ಹಳ್ಳಕೊಳ್ಳಗಳಲ್ಲಿ ಸಿಕ್ಕಿಬಿದ್ದಿದ್ದಾರೆ. ಸೆರೆಮನೆಗಳಲ್ಲಿ ಬಂಧಿಗಳಾಗಿದ್ದಾರೆ. ಅವರು ಸೂರೆಯಾದರೂ, ತಪ್ಪಿಸುವವನು ಒಬ್ಬನೂ ಇಲ್ಲ. ಕೊಳ್ಳೆಯಾದದ್ದನ್ನು, “ತಿರುಗಿ ಹಿಂದಕ್ಕೆ ಕೊಡು,” ಎಂದು ಹೇಳುವ ಒಬ್ಬನೂ ಇಲ್ಲ.</verse>
				<verse number="23">ನಿಮ್ಮಲ್ಲಿ ಯಾರು ಇವುಗಳಿಗೆ ಕಿವಿಗೊಡುವರು? ಯಾರು ಇನ್ನು ಮುಂದೆ ಆಲಿಸಿ ಕೇಳುವರು?</verse>
				<verse number="24">ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪಮಾಡಿದೆವು? ಅದು ಯೆಹೋವ ದೇವರಿಗೆ ವಿರೋಧವಾಗಿಯಲ್ಲವೇ. ಏಕೆಂದರೆ ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ನಿಯಮಕ್ಕೆ ಅವಿಧೇಯರಾದರು.</verse>
				<verse number="25">ಆದ್ದರಿಂದ ಆತನು ತನ್ನ ಯುದ್ಧದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ, ಅವನಿಗೆ ತಿಳಿಯಲಿಲ್ಲ. ಅದು ಅವನನ್ನು ಸುಟ್ಟರೂ, ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.</verse>
			</chapter>
			<chapter number="43">
				<verse number="1">ಈಗಲಾದರೋ ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ, ರೂಪಿಸಿದ ಯೆಹೋವ ದೇವರು ಹೇಳುವುದೇನೆಂದರೆ: “ಹೆದರಬೇಡ, ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ.</verse>
				<verse number="2">ನೀನು ಜಲರಾಶಿಯನ್ನು ದಾಟಿಹೋಗುವಾಗ, ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ, ಅವು ನಿನ್ನನ್ನು ಮುಳುಗಿಸುವುದಿಲ್ಲ; ಬೆಂಕಿಯಲ್ಲಿ ನಡೆಯುವಾಗ, ನೀನು ಸುಟ್ಟುಹೋಗುವುದಿಲ್ಲ; ಜ್ವಾಲೆಯು ನಿನ್ನನ್ನು ದಹಿಸದು.</verse>
				<verse number="3">ಏಕೆಂದರೆ ನಾನೇ ನಿನ್ನ ಯೆಹೋವ ದೇವರೂ ನಿನ್ನ ದೇವರಾದ ಇಸ್ರಾಯೇಲಿನ ಪರಿಶುದ್ಧನೂ, ನಿನ್ನ ರಕ್ಷಕನೂ ಆಗಿದ್ದೇನೆ. ಈಜಿಪ್ಟನ್ನು ನಿನ್ನ ವಿಮೋಚನೆಗೂ, ಇಥಿಯೋಪಿಯ ಮತ್ತು ಸೆಬಾ ಸೀಮೆಗಳನ್ನು ನಿನಗೋಸ್ಕರ ಕೊಟ್ಟಿದ್ದೇನೆ.</verse>
				<verse number="4">ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ ನಾನು ನಿನಗೋಸ್ಕರ ಮನುಷ್ಯರನ್ನೂ, ನಿನ್ನ ಪ್ರಾಣಕ್ಕೆ ಜನಾಂಗಗಳನ್ನೂ ಕೊಡುವೆನು.</verse>
				<verse number="5">ಭಯಪಡಬೇಡ, ಏಕೆಂದರೆ ನಾನೇ ನಿನ್ನೊಂದಿಗೆ ಇದ್ದೇನೆ. ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು. ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.</verse>
				<verse number="6">‘ನಾನು ಒಪ್ಪಿಸಿಬಿಡು,’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ,’ ಎಂದು ದಕ್ಷಿಣದಿಕ್ಕಿಗೂ ಹೇಳಿ, ದೂರದಲ್ಲಿರುವ ನನ್ನ ಪುತ್ರರನ್ನೂ, ದಿಗಂತಗಳಲ್ಲಿರುವ ನನ್ನ ಪುತ್ರಿಯರನ್ನೂ,</verse>
				<verse number="7">ನನ್ನ ಹೆಸರಿನಿಂದ ಕರೆಯಲಾದ ಪ್ರತಿಯೊಬ್ಬನನ್ನೂ ಬರಮಾಡುವೆನು. ಏಕೆಂದರೆ ಅವರನ್ನು ನನ್ನ ಮಹಿಮೆಗಾಗಿ ಸೃಷ್ಟಿಸಿದ್ದೇನೆ. ನಾನು ಅವರನ್ನು ನಿರ್ಮಿಸಿದ್ದೇನೆ. ಹೌದು, ನಾನು ಅವರನ್ನು ಉಂಟುಮಾಡಿದ್ದೇನೆ.”</verse>
				<verse number="8">ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡರಾದ ಜನರನ್ನು ಕರೆ.</verse>
				<verse number="9">ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ. ಎಲ್ಲಾ ಜನರೂ ಸೇರಿಕೊಳ್ಳಲಿ. ಅವರ ದೇವರುಗಳಲ್ಲಿ ಭವಿಷ್ಯವನ್ನು ನುಡಿಯಬಲ್ಲವರು ಯಾರು? ಗತಿಸಿದ ಸಂಗತಿಗಳನ್ನು ಮುಂತಿಳಿಸುವವರು ಯಾರು? ನಾವು ನೀತಿವಂತರೆಂದು ಸ್ಥಾಪಿಸುವುದಕ್ಕೆ ಸಾಕ್ಷಿಗಳನ್ನು ಕರೆತರಲಿ. ಆ ಸಾಕ್ಷಿಗಳು ಇದನ್ನು ಕೇಳಿ, ನಿಜವೆಂದು ಹೇಳಲಿ.</verse>
				<verse number="10">ಯೆಹೋವ ದೇವರು ಹೇಳುವುದೇನೆಂದರೆ, “ನೀವು ನನಗೆ ಸಾಕ್ಷಿಗಳಾಗಿದ್ದೀರಿ,” “ನಾನು ಇರುವಾತನೇ ಆಗಿದ್ದೇನೆಂದು, ನೀವು ತಿಳಿದು, ನಂಬಿ, ಗ್ರಹಿಸಿರಿ; ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆಯೂ, ನನ್ನ ಅನಂತರದಲ್ಲಿಯೂ ಯಾವ ದೇವರೂ ಇರುವುದಿಲ್ಲ.</verse>
				<verse number="11">ನಾನೇ, ನಾನೇ, ಯೆಹೋವ ದೇವರು ಆಗಿದ್ದೇನೆ. ನನ್ನ ಹೊರತು ಯಾವ ರಕ್ಷಕನೂ ಇಲ್ಲ.</verse>
				<verse number="12">ನಿಮ್ಮಲ್ಲಿ ಅನ್ಯದೇವರು ಇಲ್ಲದಿರುವಾಗಲೇ, ನಾನೇ ರಕ್ಷಣೆಯನ್ನು ಪ್ರಕಟಿಸಿ, ತೋರಿಸಿದ್ದೇನೆ. ಆದ್ದರಿಂದ ನೀವು ನನ್ನ ಸಾಕ್ಷಿಗಳು,” “ನಾನೇ ದೇವರು ಎಂದು ಯೆಹೋವ ದೇವರು ನುಡಿಯುತ್ತಾರೆ.</verse>
				<verse number="13">ಹೌದು, ಅಂದಿನಿಂದಲೇ ನಾನಿದ್ದೇನೆ. ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ. ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?”</verse>
				<verse number="14">ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಯೆಹೋವ ದೇವರು ಹೇಳುವುದೇನೆಂದರೆ: ನಾನು ನಿಮಗೋಸ್ಕರ ಬಾಬಿಲೋನಿಗೆ ಕಳುಹಿಸಿ, ಅವರ ಘನವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.</verse>
				<verse number="15">ಯೆಹೋವನಾದ ನಾನು ನಿಮ್ಮ ಪರಿಶುದ್ಧನೂ, ಇಸ್ರಾಯೇಲನ್ನು ಸೃಷ್ಟಿಸಿದವನೂ, ನಿಮ್ಮ ಅರಸನೂ ಆಗಿದ್ದೇನೆ.</verse>
				<verse number="16">ಯೆಹೋವ ದೇವರು ಇಂತೆನ್ನುತ್ತಾರೆ: ಸಮುದ್ರದ ಮುಖಾಂತರವಾಗಿ ಮಾರ್ಗಮಾಡಿದವನೂ; ಬಲವಾದ ನೀರಿನಲ್ಲಿ ದಾರಿ ಮಾಡಿದವನೂ;</verse>
				<verse number="17">ರಥಗಳನ್ನು, ಕುದುರೆಗಳನ್ನು, ದಂಡನ್ನು, ಪರಾಕ್ರಮಶಾಲಿಗಳನ್ನು ಹೊರಡಿಸಿ, ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ, ದೀಪದ ಬತ್ತಿ ನಂದಿ ಆರಿಹೋಗುವಂತೆಯೂ ಮಾಡಿದಾತನು ಇಂತೆನ್ನುತ್ತಾನೆ:</verse>
				<verse number="18">“ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ. ಹಳೆಯ ಸಂಗತಿಗಳನ್ನು ಯೋಚಿಸಬೇಡಿರಿ.</verse>
				<verse number="19">ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು. ಅದು ಈಗಲೇ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸುವೆನು. ಮರುಭೂಮಿಯಲ್ಲಿ ನದಿಗಳನ್ನೂ ಉಂಟುಮಾಡುವೆನು.</verse>
				<verse number="20">ಕಾಡುಮೃಗಗಳು, ನರಿಗಳು, ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ. ಅಡವಿಯಲ್ಲಿ ನೀರನ್ನು, ಮರುಭೂಮಿಯಲ್ಲಿ ನದಿಗಳನ್ನು ನಾನು ಆಯ್ದುಕೊಂಡ ನನ್ನ ಪ್ರಜೆಗಳಿಗೆ ಕುಡಿಯುವುದಕ್ಕೆ ಕೊಟ್ಟೆನು.</verse>
				<verse number="21">ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ನನಗೋಸ್ಕರ ರೂಪಿಸಿದ್ದೇನೆ.</verse>
				<verse number="22">“ಆದರೂ ಯಾಕೋಬೇ, ನೀನು ನನ್ನನ್ನು ಪ್ರಾರ್ಥಿಸಲಿಲ್ಲ. ಇಸ್ರಾಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡಿದ್ದೀ!</verse>
				<verse number="23">ನಿನ್ನ ದಹನಬಲಿಯ ಎಳೆಯ ಕುರಿಗಳನ್ನು ನನಗೆ ತರಲಿಲ್ಲ. ನಿನ್ನ ಯಜ್ಞಗಳಿಂದ ನನ್ನನ್ನು ಸನ್ಮಾನಿಸಲಿಲ್ಲ. ನೀನು ಕಾಣಿಕೆಯನ್ನು ಅರ್ಪಿಸದೆ ಇದ್ದದ್ದಕ್ಕೆ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.</verse>
				<verse number="24">ನೀನು ನನಗೋಸ್ಕರ ಹಣದಿಂದ ಪರಿಮಳ ತೈಲವನ್ನು ಕೊಂಡುಕೊಳ್ಳಲಿಲ್ಲ. ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ಅಕ್ರಮಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.</verse>
				<verse number="25">“ನಾನಾಗಿ ನಾನೇ, ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.</verse>
				<verse number="26">ನನಗೆ ಜ್ಞಾಪಕಪಡಿಸು, ನಾವಿಬ್ಬರೂ ವಾದಿಸುವಾ, ನೀನು ನೀತಿವಂತನೆಂದು ತೋರಿಸು.</verse>
				<verse number="27">ನಿನ್ನ ಮೂಲಪಿತೃ ಪಾಪಮಾಡಿದ್ದಾನೆ. ನಿನ್ನ ಬೋಧಕರು ನನಗೆ ವಿರೋಧವಾಗಿ ದ್ರೋಹ ಮಾಡಿದ್ದಾರೆ.</verse>
				<verse number="28">ಆದಕಾರಣ ಪವಿತ್ರಾಲಯದ ಪ್ರಧಾನರನ್ನು ನಾಚಿಕೆಪಡಿಸಿ, ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗಳಿಗೂ ಒಪ್ಪಿಸಿಬಿಟ್ಟಿದ್ದೇನೆ.</verse>
			</chapter>
			<chapter number="44">
				<verse number="1">“ಈಗಲಾದರೋ ನನ್ನ ಸೇವಕನಾದ ಯಾಕೋಬೇ ಮತ್ತು ನಾನು ಆರಿಸಿಕೊಂಡ ಇಸ್ರಾಯೇಲೇ, ಕೇಳು:</verse>
				<verse number="2">ನಿನ್ನ ನಿರ್ಮಾಣ ಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು, ನಿನಗೆ ಸಹಾಯ ಮಾಡುವವರಾದ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಸೇವಕನಾದ ಯಾಕೋಬೇ, ನಾನು ಆಯ್ದುಕೊಂಡ ಯೆಶುರೂನೇ, ಭಯಪಡಬೇಡ.</verse>
				<verse number="3">ಏಕೆಂದರೆ ನಾನು ಬಾಯಾರಿದ ಭೂಮಿಯ ಮೇಲೆ ನೀರನ್ನು ಸುರಿಸುವೆನು. ಒಣನೆಲದ ಮೇಲೆ ಪ್ರವಾಹಗಳನ್ನು ಬರಮಾಡುವೆನು. ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನೂ, ನಿನ್ನಿಂದ ಹುಟ್ಟುವಂಥದ್ದರ ಮೇಲೆ ನನ್ನ ಆಶೀರ್ವಾದವನ್ನೂ ಸುರಿಸುವೆನು.</verse>
				<verse number="4">ನೀರಿನ ಕಾಲುವೆಗಳ ಬಳಿಯಲ್ಲಿ, ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು.</verse>
				<verse number="5">ಒಬ್ಬನು, ‘ನಾನು ಯೆಹೋವನವನು,’ ಅನ್ನುವನು, ಇನ್ನೊಬ್ಬನು ನಾನು, ‘ಯಾಕೋಬನ ಹೆಸರಿನವನು,’ ಎಂದು ಹೇಳಿಕೊಳ್ಳುವನು. ಮತ್ತೊಬ್ಬನು ತನ್ನ ಕೈಯ ಮೇಲೆ, ‘ಯೆಹೋವ ದೇವರಿಗೆ ಸ್ವಂತ,’ ಎಂದು ಬರೆಯಿಸಿಕೊಂಡು, ತನ್ನಷ್ಟಕ್ಕೆ ತಾನೇ ಇಸ್ರಾಯೇಲಿನ ಅಡ್ಡಹೆಸರನ್ನು ಇಟ್ಟುಕೊಳ್ಳುವನು.</verse>
				<verse number="6">“ಇಸ್ರಾಯೇಲಿನ ಅರಸನೂ ವಿಮೋಚಕನೂ, ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ: ನಾನೇ ಮೊದಲನೆಯವನು, ನಾನೇ ಕಡೆಯವನು. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.</verse>
				<verse number="7">ನಾನು ಪುರಾತನ ಕಾಲದವರನ್ನು ಸೃಷ್ಟಿಸಿದಂದಿನಿಂದ ನನ್ನ ಹಾಗೆ ಕರೆದು, ತಿಳಿಸಿ, ಅದನ್ನು ಸರಿಯಾಗಿ ನನಗೋಸ್ಕರ ಸಿದ್ಧಮಾಡಿದವನು ಯಾರು? ಮುಂದೆ ಬರಬೇಕಾದದ್ದನ್ನು ಅವರು ನನಗೆ ತಿಳಿಸಲಿ.</verse>
				<verse number="8">ಹೆದರಬೇಡ, ಇಲ್ಲವೆ ಭಯಪಡಬೇಡ! ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ ಮತ್ತು ಅದನ್ನು ಪ್ರಕಟಿಸಲಿಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಇಲ್ಲ, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”</verse>
				<verse number="9">ವಿಗ್ರಹಗಳನ್ನು ಕೆತ್ತುವವರು ನಿರರ್ಥಕರು. ಅವರ ಇಷ್ಟ ಬೊಂಬೆಗಳು ಏತಕ್ಕೂ ಬಾರವು. ಅವುಗಳಲ್ಲಿ ವಿಶ್ವಾಸವಿಡುವವರು ಕುರುಡರು, ತಿಳುವಳಿಕೆ ಇಲ್ಲದವರು. ಅಂಥವರು ನಾಚಿಕೆಗೆ ಗುರಿಯಾಗುವರು.</verse>
				<verse number="10">ದೇವರನ್ನು ರೂಪಿಸಿದವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಎಂಥವರು?</verse>
				<verse number="11">ಅವನೂ, ಅವನ ಸಂಗಡಿಗರೂ ನಾಚಿಕೆಗೆ ಒಳಗಾಗುವರು ಮತ್ತು ಆ ಕೆತ್ತನೆಯ ಕೆಲಸದವರು ಮನುಷ್ಯ ಮಾತ್ರದವರೇ. ಅವರೆಲ್ಲರೂ ಒಟ್ಟುಗೂಡಿ ನಿಂತುಕೊಳ್ಳಲಿ. ಅವರು ಭಯಪಟ್ಟು, ಒಟ್ಟಿಗೆ ಲಜ್ಜೆಪಡುವರು.</verse>
				<verse number="12">ಕಮ್ಮಾರನು ಸಲಕರಣೆಯನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸ ಮಾಡುತ್ತಾನೆ; ಅವನು ಸುತ್ತಿಗೆ ಹಿಡಿದು ತನ್ನ ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುತ್ತಾನೆ; ಅವನು ಹಸಿದು ಬಲಹೀನನಾಗಿದ್ದರೂ, ನೀರು ಕುಡಿಯದೇ ದಣಿಯುತ್ತಾನೆ.</verse>
				<verse number="13">ಬಡಗಿಯು ಮರಕ್ಕೆ ನೂಲನ್ನು ಹಿಡಿದು, ಮೊಳೆಯಿಂದ ಗೆರೆ ಎಳೆಯುತ್ತಾನೆ. ಉಳಿಬಾಚಿಗಳಿಂದ ಕೆತ್ತುತ್ತಾನೆ. ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾರಕ್ಕೆ ತಂದು, ಮಂದಿರದಲ್ಲಿ ಇಡಲು ಮನುಷ್ಯನ ಅಂದದಂತೆ ರೂಪಿಸುತ್ತಾನೆ.</verse>
				<verse number="14">ಅರಣ್ಯದ ಮಧ್ಯದಲ್ಲಿ ಇರುವ ಮರಗಳಲ್ಲಿ ದೇವದಾರುಗಳನ್ನು ಕಡಿದು, ತುರಾಯಿ, ಸೈಪ್ರಸ್ ಮತ್ತು ಏಲಾ ಮರಗಳನ್ನು ತನ್ನ ಕೆಲಸಕ್ಕೋಸ್ಕರ ತೆಗೆದುಕೊಳ್ಳುತ್ತಾನೆ. ಪೀತದಾರ ಮರವನ್ನು ಅವನು ನೆಡಲು, ಮಳೆಯು ಅದನ್ನು ಬೆಳೆಯಿಸುವುದು.</verse>
				<verse number="15">ಆಗ ಅದು ಮನುಷ್ಯರು ಉರಿಸುವುದಕ್ಕಾಗುವುದು. ಏಕೆಂದರೆ ಅದರಿಂದ ಚಳಿಕಾಯಿಸಿಕೊಳ್ಳುತ್ತಾನೆ. ಅದನ್ನು ಬೆಂಕಿ ಹಚ್ಚಿ, ರೊಟ್ಟಿಯನ್ನು ಸುಡುತ್ತಾನೆ. ಅವನು ಅದರಿಂದ ಒಂದು ದೇವರನ್ನು ಮಾಡಿ, ಅದಕ್ಕೆ ನಮಸ್ಕರಿಸುತ್ತಾನೆ. ಅದರಲ್ಲಿ ಒಂದು ಕೆತ್ತಿದ ವಿಗ್ರಹವನ್ನು ಮಾಡಿ, ಅದಕ್ಕೆ ಅಡ್ಡ ಬೀಳುವನು.</verse>
				<verse number="16">ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು. ಅದರ ಇನ್ನೊಂದು ಭಾಗದಲ್ಲಿ ಮಾಂಸವನ್ನು ಉಣ್ಣುವನು. ಮಾಂಸವನ್ನು ಸುಟ್ಟು ತೃಪ್ತಿಹೊಂದುವನು. ಅವನು ಚಳಿಕಾಯಿಸಿಕೊಳ್ಳುತ್ತಾ, ಬೆಂಕಿಯನ್ನು ಕಂಡೆ, ಬೆಚ್ಚಗಾಯಿತು ಅಂದುಕೊಳ್ಳುವನು.</verse>
				<verse number="17">ಅದರಲ್ಲಿ ಉಳಿದ ಭಾಗವನ್ನು ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ, ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ, “ನೀನೇ ನನ್ನ ದೇವರು, ನನ್ನನ್ನು ಕಾಪಾಡು,” ಎಂದು ಬೇಡಿಕೊಳ್ಳುವನು.</verse>
				<verse number="18">ಅವರು ಏನೂ ತಿಳಿಯದವರು ಇಲ್ಲವೆ ಏನೂ ಗ್ರಹಿಸಲಾರದವರು. ಏಕೆಂದರೆ ಆತನು ಅವರ ಕಣ್ಣು ಕಾಣದಂತೆಯೂ, ಹೃದಯಗಳು ಗ್ರಹಿಸದಂತೆಯೂ ಮುಚ್ಚಿಬಿಟ್ಟಿದ್ದಾನೆ.</verse>
				<verse number="19">“ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸವನ್ನು ಸುಟ್ಟು ತಿಂದೆನಲ್ಲಾ. ಮಿಕ್ಕಿದ್ದರಲ್ಲಿ ಅಸಹ್ಯವಾದದ್ದನ್ನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ.</verse>
				<verse number="20">ಅವನು ತಿನ್ನುವುದು ಬೂದಿಯೇ. ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, ನನ್ನ ಬಲಗೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು. ತನ್ನ ಪ್ರಾಣವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.</verse>
				<verse number="21">“ಯಾಕೋಬೇ, ಇಸ್ರಾಯೇಲೇ! ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನೀನು ನನ್ನ ಸೇವಕನಾಗಿದ್ದೀ. ನಾನು ನಿನ್ನನ್ನು ನಿರ್ಮಿಸಿದೆನು. ನೀನು ನನ್ನ ಸೇವಕನು. ಇಸ್ರಾಯೇಲೇ, ನಾನು ನಿನ್ನನ್ನು ಮರೆತುಬಿಡೆನು.</verse>
				<verse number="22">ನಾನು ನಿನ್ನ ದ್ರೋಹಗಳನ್ನು ಮೋಡದಂತೆ ಅಳಿಸಿಬಿಟ್ಟಿದ್ದೇನೆ. ನಿನ್ನ ಪಾಪಗಳನ್ನು ಮುಂಜಾನೆಯ ಮಂಜಿನಂತೆ ಹಾರಿಸಿದ್ದೇನೆ. ನನ್ನ ಕಡೆಗೆ ತಿರುಗಿಕೋ. ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದ್ದೇನೆ.”</verse>
				<verse number="23">ಆಕಾಶಗಳೇ, ಹರ್ಷಧ್ವನಿಗೈಯಿರಿ. ಏಕೆಂದರೆ ಯೆಹೋವ ದೇವರು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಕೆಳಭಾಗವೇ ಆರ್ಭಟಿಸು. ಪರ್ವತಗಳೇ, ವನವೇ, ಅದರಲ್ಲಿರುವ ಎಲ್ಲಾ ಮರಗಳೇ ಉತ್ಸಾಹಧ್ವನಿ ಮಾಡಿರಿ. ಏಕೆಂದರೆ ಯೆಹೋವ ದೇವರು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.</verse>
				<verse number="24">“ನಿನ್ನನ್ನು ಗರ್ಭದಿಂದ ರೂಪಿಸಿದವರೂ ನಿನ್ನ ವಿಮೋಚಕರೂ ಆದ ಯೆಹೋವ ದೇವರು ಇಂತೆನ್ನುತ್ತಾರೆ: “ಎಲ್ಲವನ್ನು ಉಂಟುಮಾಡಿದ ಯೆಹೋವ ದೇವರು ನಾನೇ. ನಾನೊಬ್ಬನೇ ಆಕಾಶವನ್ನು ವಿಸ್ತರಿಸಿ, ಭೂಮಿಯನ್ನು ನಾನೇ ವಿಶಾಲವಾಗಿ ಹರಡಿದವನಾಗಿದ್ದೇನೆ.</verse>
				<verse number="25">ಸುಳ್ಳುಗಾರರ ಗುರುತುಗಳನ್ನು ನಿರರ್ಥಕ ಮಾಡುವವನೂ ಮತ್ತು ಕಣಿ ಹೇಳುವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ, ಅವರ ತಿಳುವಳಿಕೆಯನ್ನು ಬುದ್ಧಿಹೀನವಾಗ ಮಾಡುವವನೂ</verse>
				<verse number="26">ತನ್ನ ಸೇವಕನ ಮಾತುಗಳನ್ನು ಸ್ಥಾಪಿಸುವವನು, ಮತ್ತು ತನ್ನ ದೂತರ ಆಲೋಚನೆಯನ್ನು ಪೂರೈಸುವವನು. “ಯೆರೂಸಲೇಮಿಗೆ, ‘ನೀನು ನಿವಾಸವಾಗುವೆ,’ ಯೆಹೂದ ಪಟ್ಟಣಗಳಿಗೆ, ‘ಅವು ಪುನಃ ಕಟ್ಟಲಾಗುವುದು,’ ಮತ್ತು ಅದರ ಹಾಳು ಸ್ಥಳಗಳಿಗೆ, ‘ನಾನು ಪುನಃಸ್ಥಾಪಿಸುವೆನು,’ ಎಂದು ಹೇಳುವವನು,</verse>
				<verse number="27">ಅಗಾಧಕ್ಕೆ, ‘ಒಣಗಿಸಿಬಿಡುವೆನು,’ ‘ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು,’ ಎಂದು ಅನ್ನುವವನೂ;</verse>
				<verse number="28">ಕೋರೆಷನ ವಿಷಯವಾಗಿ ಹೀಗೆ ಹೇಳುವೆನು, ‘ನನ್ನ ಕುರುಬನು, ನನ್ನ ಇಷ್ಟವನ್ನೆಲ್ಲಾ ಪೂರೈಸುವವನು, ಯೆರೂಸಲೇಮಿಗೆ, “ನೀನು ಪುನಃ ನಿರ್ಮಾಣವಾಗುವೆ,” ದೇವಾಲಯಕ್ಕೆ, “ನಿನಗೆ ಅಸ್ತಿವಾರವು ಹಾಕಲಾಗುವುದು,” ಎಂದು ಅನ್ನುವವನೂ ನಾನೇ.’</verse>
			</chapter>
			<chapter number="45">
				<verse number="1">“ಯೆಹೋವ ದೇವರು ತಾವೇ ಅಭಿಷೇಕಿಸಿದ ಕೋರೆಷನಿಗೆ ಹೇಳುವುದೇನೆಂದರೆ: ರಾಷ್ಟ್ರಗಳನ್ನು ನೀನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯಲು ನಾನು ನಿನ್ನ ಬಲಗೈಯನ್ನು ಹಿಡಿದು ನಡೆಸುವೆನು.</verse>
				<verse number="2">ನಾನು ನಿನ್ನ ಮುಂದೆ ಹೋಗಿ ಬೆಟ್ಟಗುಡ್ಡಗಳನ್ನು ಸಮಮಾಡಿ, ಕಂಚಿನ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಡುವೆನು.</verse>
				<verse number="3">ನಿನ್ನನ್ನು ಹೆಸರು ಹಿಡಿದು ಕರೆಯುವ ಯೆಹೋವ ದೇವರು ನಾನೇ! ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ, ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪಗಳನ್ನೂ ನಿನಗೆ ಕೊಡುವೆನು.</verse>
				<verse number="4">ಏಕೆಂದರೆ ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆಯ್ದುಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಹೆಸರನ್ನು ಇಟ್ಟಿದ್ದೇನೆ.</verse>
				<verse number="5">ನಾನೇ ಯೆಹೋವ ದೇವರು, ಮತ್ತೊಬ್ಬನಿಲ್ಲ. ನನ್ನ ಹೊರತು ಯಾವ ದೇವರೂ ಇಲ್ಲ. ನೀನು ನನ್ನನ್ನು ಅರಿಯದವನಾಗಿದ್ದರೂ ನಿನ್ನನ್ನು ಬಲಪಡಿಸುವೆನು.</verse>
				<verse number="6">ಪೂರ್ವದಿಂದ ಪಶ್ಚಿಮದವರೆಗೆ ಇರುವವರೆಲ್ಲರೂ ನನ್ನ ಹೊರತು ಮತ್ತೊಬ್ಬನು ಇಲ್ಲ, ನಾನೇ ಯೆಹೋವ ದೇವರು ಮತ್ತೊಬ್ಬ ದೇವರು ಇಲ್ಲ ಎಂದು ನನ್ನನ್ನು ತಿಳಿದುಕೊಳ್ಳುವರು.</verse>
				<verse number="7">ಬೆಳಕನ್ನು ರೂಪಿಸುವವನೂ, ಕತ್ತಲನ್ನು ನಿರ್ಮಿಸುವವನೂ, ಸಮಾಧಾನವನ್ನು ಉಂಟುಮಾಡುವವನೂ, ವಿಪತ್ತನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.</verse>
				<verse number="8">“ಆಕಾಶಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ. ಗಗನವು ನೀತಿಯನ್ನು ಸುರಿಸಲಿ. ಭೂಮಿಯು ತೆರೆದು ರಕ್ಷಣೆಯನ್ನು ತರಲಿ. ನೀತಿಯು ಅದರೊಟ್ಟಿಗೆ ಮೊಳೆಯಲಿ. ಇದನ್ನು ಸೃಷ್ಟಿಸಿದ ಯೆಹೋವ ದೇವರು ನಾನೇ!</verse>
				<verse number="9">“ತನ್ನನ್ನು ರೂಪಿಸಿದವನ ಸಂಗಡ ವಾದಮಾಡುವವನಿಗೆ ಕಷ್ಟ! ಅವನು ಸಹ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದೂ, ‘ನಾನು ನಿನ್ನ ಕೈ ಕೆಲಸವು ಅಲ್ಲ,’ ಎಂದೂ ಆ ಮಡಕೆ ಹೇಳುವುದುಂಟೇ?</verse>
				<verse number="10">ನೀನು ಹುಟ್ಟಿಸಿದ್ದು ಏಕೆ? ಎಂದು ತನ್ನ ತಂದೆಯನ್ನು ಕೇಳುವವನಿಗೂ, ‘ನೀನು ಹಡೆದದ್ದು ಏಕೆ?’ ಎಂದು ತಾಯಿಗೆ ಕೇಳುವವನಿಗೂ ಶಾಪ!</verse>
				<verse number="11">“ಇಸ್ರಾಯೇಲಿನ ಪರಿಶುದ್ಧನೂ, ಅದನ್ನು ರೂಪಿಸಿದವನೂ ಆಗಿರುವ ಯೆಹೋವ ದೇವರು, ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ, ನನ್ನ ಕೈಕೆಲಸದ ವಿಷಯವಾಗಿಯೂ ನೀವು ನನಗೆ ಆಜ್ಞಾಪಿಸುವುದೇನು?</verse>
				<verse number="12">ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನುಷ್ಯನನ್ನು ಸೃಷ್ಟಿಸಿದೆನು. ನಾನೇ, ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು. ನಾನು ಅದರ ನಕ್ಷತ್ರಸೈನ್ಯಕ್ಕೆಲ್ಲಾ ಅಪ್ಪಣೆಕೊಟ್ಟೆನು.</verse>
				<verse number="13">ನಾನೇ, ಅವನನ್ನು ನೀತಿಯಲ್ಲಿ ಎಬ್ಬಿಸಿದ್ದೇನೆ. ಅವನ ಮಾರ್ಗಗಳನ್ನು ಸರಾಗ ಮಾಡುತ್ತೇನೆ. ಅವನು ನನ್ನ ಪಟ್ಟಣವನ್ನು ಕಟ್ಟಿ, ಕ್ರಯವನ್ನಾಗಲೀ, ಬಹುಮಾನವನ್ನಾಗಲೀ ಕೇಳಿಕೊಳ್ಳದೆ, ನನ್ನ ಸೆರೆಯವರನ್ನು ಕಳುಹಿಸಿಬಿಡುವನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾನೆ.</verse>
				<verse number="14">ಯೆಹೋವ ದೇವರು ಹೇಳುವುದೇನೆಂದರೆ: “ಈಜಿಪ್ಟಿನ ಆದಾಯವೂ, ಇಥಿಯೋಪಿಯದ ವ್ಯಾಪಾರವೂ, ಎತ್ತರದ ಮನುಷ್ಯರಾದ ಶೆಬದವರೂ ನಿಮ್ಮಲ್ಲಿಗೆ ಸೇರಿ, ನಿಮ್ಮವರಾಗಿ ನಿಮ್ಮನ್ನು ಅನುಸರಿಸುವರು. ಸಂಕೋಲೆಗಳನ್ನು ಕಟ್ಟಿಕೊಂಡು ಬಂದು, ನಿಮ್ಮ ಮುಂದೆ ಅಡ್ಡಬಿದ್ದು, ‘ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊಬ್ಬನಿಲ್ಲ; ಬೇರೆ ದೇವರು ಇಲ್ಲವೇ ಇಲ್ಲ.’ ”</verse>
				<verse number="15">ಇಸ್ರಾಯೇಲರ ದೇವರೇ, ರಕ್ಷಕನೇ, ನಿಶ್ಚಯವಾಗಿಯೂ ನೀನು ಮರೆಮಾಡಿಕೊಳ್ಳುವ ದೇವರಾಗಿದ್ದೀ.</verse>
				<verse number="16">ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು.</verse>
				<verse number="17">ಆದರೆ ಇಸ್ರಾಯೇಲರು ಶಾಶ್ವತವಾದ ರಕ್ಷಣೆಯೊಂದಿಗೆ ಯೆಹೋವ ದೇವರಲ್ಲಿ ಸಂರಕ್ಷಣೆ ಹೊಂದುವರು. ನೀವು ಯುಗಯುಗಾಂತರಕ್ಕೂ ಎಂದಿಗೂ ನಾಚಿಕೆಪಡುವುದಿಲ್ಲ, ಅವಮಾನ ಹೊಂದುವುದಿಲ್ಲ.</verse>
				<verse number="18">ಆಕಾಶಗಳನ್ನು ನಿರ್ಮಿಸಿದ ಯೆಹೋವ ದೇವರು ಇಂತೆನ್ನುತ್ತಾನೆ, “ದೇವರು ತಾನೇ ಭೂಮಿಯನ್ನು ನಿರ್ಮಿಸಿ, ಅದನ್ನು ಉಂಟುಮಾಡಿದನು. ಆತನೇ ಅದನ್ನು ಸ್ಥಾಪಿಸಿದನು. ಅದನ್ನು ವ್ಯರ್ಥವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದನು. ನಾನೇ ಯೆಹೋವ ದೇವರು, ನಾನಲ್ಲದೆ ಇನ್ನಾರೂ ಇಲ್ಲ.</verse>
				<verse number="19">ಭೂಮಿಯ ಕತ್ತಲಾದ ಸ್ಥಳದಲ್ಲಿ ರಹಸ್ಯವಾಗಿ ನಾನು ಮಾತನಾಡಲಿಲ್ಲ. ‘ವ್ಯರ್ಥವಾಗಿ ನನ್ನನ್ನು ಹುಡುಕಿರಿ’ ಎಂದು ಯಾಕೋಬನ ವಂಶದವರಿಗೆ ನಾನು ಹೇಳಲಿಲ್ಲ. ಯೆಹೋವನಾದ ನಾನೇ ನೀತಿಯನ್ನು ಮಾತನಾಡಿ, ಯಥಾರ್ಥವಾದವುಗಳನ್ನೇ ತಿಳಿಸುತ್ತೇನೆ.</verse>
				<verse number="20">“ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸಮೀಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತುಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.</verse>
				<verse number="21">ನೀವು ಏನು ಸಾರಬೇಕೋ ಅದನ್ನು ಈಗ ತನ್ನಿರಿ ಹೌದು, ಒಟ್ಟಿಗೆ ಅವರು ಆಲೋಚಿಸಲಿ ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಪ್ರಾರಂಭದಿಂದ ಇದನ್ನು ತಿಳಿಸಿದವರು ಯಾರು? ಯೆಹೋವನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲ. ನನ್ನ ಹೊರತಾಗಿ ನೀತಿಯುಳ್ಳ ದೇವರೂ, ರಕ್ಷಕನೂ ಇಲ್ಲವೇ ಇಲ್ಲ.</verse>
				<verse number="22">“ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿರಿ, ರಕ್ಷಣೆಯನ್ನು ಪಡೆಯಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.</verse>
				<verse number="23">ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ. ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ. ಅದು ಹಿಂದಿರುಗದು. ಪ್ರತಿಯೊಬ್ಬರು ನನ್ನ ಮುಂದೆ ಮೊಣಕಾಲೂರುವರು. ಪ್ರತಿಯೊಂದು ನಾಲಿಗೆಯೂ ಪ್ರತಿಜ್ಞೆ ಮಾಡುವುದು.</verse>
				<verse number="24">ಯೆಹೋವ ದೇವರಲ್ಲಿ ಮಾತ್ರ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಅವರ ಬಳಿಗೆ ಬರುವರು.” ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಗೆ ಈಡಾಗುವರು, ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.</verse>
				<verse number="25">ಇಸ್ರಾಯೇಲಿನ ಸಂತಾನದವರೆಲ್ಲರೂ ಯೆಹೋವ ದೇವರಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.</verse>
			</chapter>
			<chapter number="46">
				<verse number="1">ಬೇಲ್ ದೇವತೆಯು ತಗ್ಗಿದೆ, ನೆಬೋ ದೇವತೆಯು ಕುಗ್ಗಿದೆ. ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು. ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.</verse>
				<verse number="2">ಒಟ್ಟಿಗೆ ಕುಗ್ಗಿ ಬಗ್ಗಿವೆ. ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ, ತಾವೇ ಸೆರೆಗೆ ಹೋದವು.</verse>
				<verse number="3">ಯಾಕೋಬನ ಮನೆತನದವರೇ, ಇಸ್ರಾಯೇಲ್ ಮನೆತನದಲ್ಲಿ ಉಳಿದಿರುವವರೇ, ನಿಮ್ಮನ್ನು ಗರ್ಭದಲ್ಲಿ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದಾತನ ಮಾತನ್ನು ಕೇಳಿರಿ.</verse>
				<verse number="4">ನಿಮ್ಮ ಮುಪ್ಪಿನ ತನಕ ನಾನೇ ಆಧಾರ; ನೆರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು; ನಾನೇ ಉಂಟುಮಾಡಿದೆನು; ನಾನೇ ಹೊರುವೆನು; ಹೌದು, ನಿಮ್ಮನ್ನು ಹೊತ್ತು, ಸಹಿಸಿ, ನಿರ್ವಹಿಸುವೆನು.</verse>
				<verse number="5">ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸುತ್ತೀರಿ? ನನ್ನ ಸಮಾನರೆಂದು ನನ್ನನ್ನು ಯಾರೊಡನೆ ಸಮಮಾಡುವಿರಿ?</verse>
				<verse number="6">ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆ ಮಾಡುವರು.</verse>
				<verse number="7">ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರ ಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.</verse>
				<verse number="8">ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ.</verse>
				<verse number="9">ಪುರಾತನ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ. ಏಕೆಂದರೆ ನಾನೇ ದೇವರು, ಮತ್ತೊಬ್ಬನಿಲ್ಲ. ನಾನೇ ದೇವರು, ನನಗೆ ಸರಿಸಮಾನನು ಇಲ್ಲ.</verse>
				<verse number="10">ಆರಂಭದಲ್ಲಿಯೇ ಅಂತ್ಯವನ್ನೂ, ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ. ನನ್ನ ಆಲೋಚನೆಯು ನಿಲ್ಲುವುದೆಂದೂ, ನನಗೆ ಮೆಚ್ಚಿದ್ದನ್ನು ಮಾಡುವೆನೆಂದೂ ಅರುಹಿದ್ದೇನೆ.</verse>
				<verse number="11">ಪೂರ್ವದಿಂದ ಒಂದು ಕ್ರೂರವಾದ ಪಕ್ಷಿಯೂ, ದೂರದೇಶದಿಂದ ನನ್ನ ಆಜ್ಞೆಯನ್ನು ನಡೆಸುವ ಮನುಷ್ಯನೂ ಬರಲಿ, ಎಂದು ಕರೆದಿದ್ದೇನೆ. ನಾನು ನುಡಿದಿದ್ದೇನೆ, ಅದನ್ನು ನಾನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಮಾಡುವೆನು.</verse>
				<verse number="12">ಕಠಿಣ ಹೃದಯವುಳ್ಳವರೇ, ನೀತಿಗೆ ದೂರವಾದವರೇ, ನನಗೆ ಕಿವಿಗೊಡಿರಿ.</verse>
				<verse number="13">ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು. ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾಗದು, ನನ್ನ ಮಹಿಮೆಯಾಗಿರುವ ಇಸ್ರಾಯೇಲಿಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟುಮಾಡುವೆನು.</verse>
			</chapter>
			<chapter number="47">
				<verse number="1">ಬಾಬಿಲೋನಿನ ಪುತ್ರಿಯಾದ ಕನ್ನಿಕೆಯೇ, ಕೆಳಕ್ಕೆ ಇಳಿದುಬಂದು, ಧೂಳಿನಲ್ಲಿ ಕುಳಿತುಕೋ! ಕಸ್ದೀಯರ ಪುತ್ರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಏಕೆಂದರೆ ಇನ್ನು ಮೇಲೆ ನಿನ್ನನ್ನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯುವುದಿಲ್ಲ.</verse>
				<verse number="2">ಬೀಸುವ ಕಲ್ಲನ್ನು ಹಿಡಿದು, ಹಿಟ್ಟನ್ನು ಬೀಸು. ಮುಸುಕನ್ನು ತೆಗೆದುಹಾಕಿ, ನಿನ್ನ ಕಾಲನ್ನು ಬರಿದುಮಾಡಿ, ತೊಡೆಯನ್ನು ಮುಚ್ಚದೆ, ನದಿಗಳನ್ನು ಹಾದುಹೋಗು.</verse>
				<verse number="3">ನಿನ್ನ ಬೆತ್ತಲೆತನವು ಮರೆಮಾಡದೇ ಇದ್ದುದರಿಂದ ನೀನು ನಾಚಿಕೆಗೆ ಈಡಾಗುವೆ. ನಾನು ಯಾರನ್ನೂ ಕರುಣಿಸದೆ ಮುಯ್ಯಿತೀರಿಸುವೆನು.</verse>
				<verse number="4">ನಮ್ಮ ವಿಮೋಚಕರಿಗೆ ಸೇನಾಧೀಶ್ವರರಾದ ಯೆಹೋವ ದೇವರು ಎಂಬುದೇ ಅವರ ಹೆಸರು. ಅವರೇ ಇಸ್ರಾಯೇಲಿನ ಪರಿಶುದ್ಧರು.</verse>
				<verse number="5">ಕಸ್ದೀಯರ ಪುತ್ರಿಯೇ, “ಮೌನವಾಗಿ ಕುಳಿತುಕೋ, ಕತ್ತಲೆಯೊಳಗೆ ಹೋಗು. ಏಕೆಂದರೆ ಇನ್ನು ಮೇಲೆ ನಿನ್ನನ್ನು ರಾಜ್ಯಗಳ ರಾಣಿ ಎಂದು ಕರೆಯುವುದಿಲ್ಲ.</verse>
				<verse number="6">ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸೊತ್ತನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು. ನೀನು ಅವರಿಗೆ ಕರುಣೆಯನ್ನು ತೋರಿಸದೆ, ವೃದ್ಧರ ಮೇಲೆಯೂ, ಬಹು ಭಾರವಾದ ನೊಗವನ್ನು ಹೊರಿಸಿದೆ.</verse>
				<verse number="7">‘ನಾನು ಶಾಶ್ವತವಾದ ರಾಣಿ’ ಎಂದು ನೀನು ಅಂದುಕೊಂಡದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೊಳ್ಳಲಿಲ್ಲ. ಅವರ ಅಂತ್ಯವನ್ನೂ ನೆನಸಿಕೊಳ್ಳಲಿಲ್ಲ.</verse>
				<verse number="8">“ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ. ‘ನಾನು ವಿಧವೆಯಾಗಿ ಕೂತುಕೊಳ್ಳುವುದಿಲ್ಲ. ಪುತ್ರ ಶೋಕವನ್ನು ಅನುಭವಿಸುವುದಿಲ್ಲ,’ ಎನ್ನುವವಳೇ, ಭೋಗಾಸಕ್ತಳೇ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು.</verse>
				<verse number="9">ಒಂದೇ ದಿನದೊಳಗೆ, ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವೆಯ ಸ್ಥಿತಿಯು ಇವೆರಡೂ ನಿನಗೆ ಬರುವುದು. ನಿನ್ನ ಮಂತ್ರಗಳು ಬಹಳವಾಗಿರುವುದರಿಂದಲೂ, ನಿನ್ನ ಮಾಟಗಳು ಹೆಚ್ಚಾಗಿರುವುದರಿಂದಲೂ, ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವುವು.</verse>
				<verse number="10">ಏಕೆಂದರೆ ನೀನು ನಿನ್ನ ಕೆಟ್ಟತನದಲ್ಲಿ ನಂಬಿಕೆ ಇಟ್ಟು, ‘ನನ್ನನ್ನು ಯಾರೂ ನೋಡುವುದಿಲ್ಲ’ ಎಂದು ಹೇಳಿದೆ. ನಿನ್ನ ಜ್ಞಾನ, ನಿನ್ನ ತಿಳುವಳಿಕೆ ನಿನ್ನನ್ನು ದಾರಿ ತಪ್ಪಿಸಿದ್ದರಿಂದ, ನಿನ್ನ ಹೃದಯದಲ್ಲಿ: ‘ಈಗ ಇರುವವಳು ನಾನೇ. ನನ್ನ ಹೊರತು ಇನ್ನು ಯಾರೂ ಇಲ್ಲ,’ ಎಂದುಕೊಂಡೆ.</verse>
				<verse number="11">ಆದ್ದರಿಂದ ನಿನ್ನ ಮಂತ್ರಕ್ಕೂ ಮೀರಿದ ಕೇಡು ನಿನ್ನ ಮೇಲೆ ಬರುವುದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವುದು. ನಿನಗೆ ತಿಳಿಯದ ನಾಶನವು ಫಕ್ಕನೆ ನಿನ್ನ ಮೇಲೆ ಬರುವುದು.”</verse>
				<verse number="12">ನಿನ್ನ ಮಾಟಗಳ ಸಂಗಡ ನಿಂತುಕೋ. ನಿನ್ನ ಬಾಲ್ಯಾರಭ್ಯ ಬೇಸತ್ತು, ಅಭ್ಯಾಸಿಸಿರುವ ನಿನ್ನ ಮಂತ್ರ ತಂತ್ರಗಳನ್ನೂ, ನಿನ್ನ ಮಾಟಗಳನ್ನೂ ಲೆಕ್ಕವಿಲ್ಲದೆ ಪ್ರಯೋಗಿಸು. ಇದರಿಂದ ಒಂದು ವೇಳೆ ನಿನಗೆ ಲಾಭವಾದೀತು. ಒಂದು ವೇಳೆ ಭಯ ಉಂಟಾದೀತು.</verse>
				<verse number="13">ನೀನು ನಿನ್ನ ಬಹಳವಾದ ಆಲೋಚನೆಗಳಿಂದ ಆಯಾಸಗೊಂಡಿದ್ದೀ. ಖಗೋಳಜ್ಞರು, ಜೋಯಿಸರು, ಪಂಚಾಂಗದವರು, ಇವರೆಲ್ಲರೂ ನಿಂತುಕೊಂಡು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ರಕ್ಷಿಸಲಿ.</verse>
				<verse number="14">ಇಗೋ, ಅವರೆಲ್ಲಾ ಕೂಳೆಯಂತಿರುವರು, ಬೆಂಕಿಯು ಅವರನ್ನು ಸುಟ್ಟುಬಿಡುವುದು. ಜ್ವಾಲೆಯ ರಭಸದಿಂದ ತಮ್ಮನ್ನು ರಕ್ಷಿಸಿಕೊಳ್ಳಲಾರರು ಇಲ್ಲವೆ ಕಾಯಿಸಿಕೊಳ್ಳುವುದಕ್ಕೆ ಕೆಂಡವಿರುವುದಿಲ್ಲ. ಹತ್ತಿರ ಕೂತುಕೊಳ್ಳಲು ಬೆಂಕಿಯೂ ಇಲ್ಲ.</verse>
				<verse number="15">ನೀನು ಪ್ರಯಾಸಪಟ್ಟವುಗಳೆಲ್ಲಾ ನಿನಗೆ ಹೀಗಾಗುವುವು. ನಿನ್ನ ಬಾಲ್ಯ ಪ್ರಾಯದಿಂದ ನಿನ್ನ ವರ್ತಕರು ಚದರಿ, ತಮ್ಮ ತಮ್ಮ ಪ್ರಾಂತಕ್ಕೆ ಹೋಗಿ ಬಿಡುವರು. ನಿನ್ನನ್ನು ರಕ್ಷಿಸಲು ಒಬ್ಬನೂ ಇರನು.</verse>
			</chapter>
			<chapter number="48">
				<verse number="1">“ಇಸ್ರಾಯೇಲ್ ಎಂಬ ಹೆಸರಿನವರೂ, ಯೆಹೂದವೆಂಬ ಒರತೆಯಿಂದ ಬಂದವರೂ ಆದ ಯಾಕೋಬನ ಮನೆತನದವರೇ, ಇದನ್ನು ಕೇಳಿರಿ: ಯೆಹೋವ ದೇವರ ಹೆಸರಿನ ಮೇಲೆ ಆಣೆ ಇಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ. ಆದರೆ ಸತ್ಯದಿಂದಲೂ ಅಥವಾ ನೀತಿಯಿಂದಲೂ ಅಲ್ಲ.</verse>
				<verse number="2">ಏಕೆಂದರೆ ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು.</verse>
				<verse number="3">ಪೂರ್ವಕಾಲದಲ್ಲೇ ಹಳೆಯ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ. ಅವು ನನ್ನ ಬಾಯಿಂದ ಹೊರಟವು ಮತ್ತು ನಾನು ಅವುಗಳನ್ನು ತಿಳಿಸಿದ್ದೇನೆ. ನಾನು ತಟ್ಟನೆ ನಡೆಸಲು, ಅವು ನೆರವೇರಿದವು.</verse>
				<verse number="4">ಏಕೆಂದರೆ ನೀನು ಹಟಗಾರ. ನಿನ್ನ ಕತ್ತಿನ ನರಗಳು ಕಬ್ಬಿಣ, ನಿನ್ನ ಹಣೆ ಕಂಚಿನದು ಎಂದು ನಾನು ತಿಳಿದುಕೊಂಡಿದ್ದೇನೆ.</verse>
				<verse number="5">‘ಈ ಕಾರ್ಯಗಳನ್ನು ನನ್ನ ವಿಗ್ರಹಗಳು ನಡಿಸಿದೆ. ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ,’ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನ ಕಾಲದಲ್ಲಿಯೇ ಇವು ಸಂಭವಿಸುವುದಕ್ಕಿಂತ ಮೊದಲೇ ತಿಳಿಸಿದೆನು.</verse>
				<verse number="6">ನೀನು ಕೇಳಿದ್ದೀ, ಇವೆಲ್ಲವುಗಳನ್ನು ದೃಷ್ಟಿಸು. ನೀವು ಅದನ್ನು ಒಪ್ಪಿಕೊಳ್ಳದೆ ಇದ್ದೀರೋ? “ಇಂದಿನಿಂದ ಹೊಸ ಸಂಗತಿಗಳನ್ನೂ, ನೀನು ತಿಳಿಯದಿದ್ದ ಗುಪ್ತವಾದ ವಿಷಯಗಳನ್ನೂ ನಿನಗೆ ಹೇಳುತ್ತೇನೆ.</verse>
				<verse number="7">ಈಗಲೇ ಉಂಟಾಗುತ್ತಿವೆ, ಪುರಾತನ ಕಾಲದಲ್ಲಿ ಆಗಿಲ್ಲ; ‘ಇದೆಲ್ಲ ನನಗೆ ಮೊದಲೇ ತಿಳಿದಿತ್ತು,’ ಎಂದು ನೀನು ಕೊಚ್ಚಿಕೊಳ್ಳದಂತೆ, ನಾನು ಇವುಗಳನ್ನು ನಿನಗೆ ಮುಂತಿಳಿಸಲಿಲ್ಲ.</verse>
				<verse number="8">ನೀನು ಕೇಳಿಲ್ಲ, ತಿಳಿದೂ ಇಲ್ಲ. ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ. ಏಕೆಂದರೆ ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ನೀನು ದ್ರೋಹಿ ಎಂದೂ ನಾನು ತಿಳಿದುಕೊಂಡಿದ್ದೇನೆ.</verse>
				<verse number="9">ನಾನು ನನ್ನ ಹೆಸರಿನ ನಿಮಿತ್ತ ನನ್ನ ಕೋಪವನ್ನು ತಡೆ ಮಾಡಿದೆನು. ನಾನು ನನ್ನ ಹೆಸರಿಗೆ ಕಳಂಕ ಬಾರದಂತೆ, ನಿನ್ನನ್ನು ನಿರ್ಮೂಲಮಾಡದೆ ತಾಳಿಕೊಳ್ಳುವೆನು.</verse>
				<verse number="10">ನಾನು ನಿನ್ನನ್ನು ಪರಿಶೋಧಿಸಿದ್ದೇನೆ. ಆದರೆ ಬೆಳ್ಳಿಯಂತೆ ಅಲ್ಲ, ಸಂಕಟದ ಕುಲುಮೆಯಿಂದ ನಿನ್ನನ್ನು ಆಯ್ದುಕೊಂಡಿದ್ದೇನೆ.</verse>
				<verse number="11">ನನಗಾಗಿಯೇ, ನನಗೋಸ್ಕರವೇ ಇದನ್ನು ಮಾಡುವೆನು. ಏಕೆಂದರೆ ನನ್ನ ಹೆಸರು ಹೇಗೆ ಅಪವಿತ್ರವಾಗುವುದು? ನನ್ನ ಮಹಿಮೆಯನ್ನು ನಾನು ಮತ್ತೊಬ್ಬನಿಗೆ ಸಲ್ಲಗೊಡಿಸೆನು.</verse>
				<verse number="12">“ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ಆತನು ನಾನೇ, ನಾನೇ ಮೊದಲನೆಯವನು, ನಾನೇ ಕಡೆಯವನು.</verse>
				<verse number="13">ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು, ನಾನು ಅವುಗಳನ್ನು ಕರೆಯಲು, ಅವು ಒಟ್ಟಾಗಿ ನಿಂತುಕೊಂಡವು.</verse>
				<verse number="14">“ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಯೆಹೋವ ದೇವರು ಆಯ್ಕೆ ಮಾಡಿದ ಮಿತ್ರನು ಬಾಬಿಲೋನಿನ ವಿರುದ್ಧ ತನ್ನ ಉದ್ದೇಶವನ್ನು ಪೂರೈಸುತ್ತಾನೆ. ತನ್ನ ತೋಳು ಕಸ್ದೀಯರ ಮೇಲೆ ಇರುವುದು.</verse>
				<verse number="15">ನಾನೇ, ನಾನಾಗಿಯೇ ಮಾತನಾಡಿದ್ದೇನೆ. ನಾನೇ ಅವನನ್ನು ಕರೆದದ್ದು; ಅವನನ್ನು ನಾನೇ ಬರಮಾಡಿದ್ದೇನೆ. ಅವನ ಮಾರ್ಗವು ಯಶಸ್ವಿಯಾಗುವುದು.</verse>
				<verse number="16">“ನನ್ನ ಸಮೀಪಕ್ಕೆ ಬಂದು ಇದನ್ನು ಕೇಳಿರಿ. “ಆದಿಯಿಂದಲೂ ನಾನು ಗುಟ್ಟಾಗಿ ಮಾತಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ಅಲ್ಲಿ ನಾನು ಇದ್ದೇನೆ.” ಈಗ ಸಾರ್ವಭೌಮ ಯೆಹೋವ ದೇವರು ತಮ್ಮ ಪವಿತ್ರಾತ್ಮರ ಸಮೇತ ನನ್ನನ್ನು ಕಳುಹಿಸಿದ್ದಾರೆ.</verse>
				<verse number="17">ನಿನ್ನ ವಿಮೋಚಕನೂ, ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಯೆಹೋವ ದೇವರ ಮಾತಿದು, “ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವವನೂ ಆದ ನಾನೇ ನಿನ್ನ ಯೆಹೋವ ದೇವರು ಆಗಿದ್ದೇನೆ.</verse>
				<verse number="18">ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ, ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು,</verse>
				<verse number="19">ನಿನ್ನ ಸಂತಾನವು ಸಹ ಮರಳಿನಂತೆಯೂ, ನಿನ್ನ ಮಕ್ಕಳು ಅಸಂಖ್ಯಾತ ಧಾನ್ಯಗಳಂತೆಯೂ ಇರುವರು. ಅವರ ಹೆಸರುಗಳು ನನ್ನ ಸಮ್ಮುಖದಿಂದ, ಅಳಿದುಹೋಗದೆ ಇರುವುದು.”</verse>
				<verse number="20">ಬಾಬಿಲೋನಿನಿಂದ ಹೊರಡಿರಿ. ಕಸ್ದೀಯರ ಕಡೆಯಿಂದ ಓಡಿಹೋಗಿರಿ. ಹರ್ಷಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. “ಯೆಹೋವ ದೇವರು ತಮ್ಮ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾರೆ,” ಎಂದು ನೀವು ಹೇಳಿರಿ.</verse>
				<verse number="21">ದೇವರು ಅವರನ್ನು ಮರುಭೂಮಿಯಲ್ಲಿ ನಡಿಸಿದಾಗ, ಅವರಿಗೆ ದಾಹವಾಗಲಿಲ್ಲ. ದೇವರು ಅವರಿಗಾಗಿ ನೀರನ್ನು ಬಂಡೆಯೊಳಗಿಂದ ಹರಿಸಿದರು. ದೇವರು ಬಂಡೆಯನ್ನು ಸೀಳಲು, ನೀರು ರಭಸದಿಂದ ಹೊರಗೆ ಬಂತು.</verse>
				<verse number="22">“ದುಷ್ಟರಿಗೆ ಸಮಾಧಾನವೇ ಇಲ್ಲ,” ಎಂದು ಯೆಹೋವ ದೇವರು ನುಡಿಯುತ್ತಾರೆ.</verse>
			</chapter>
			<chapter number="49">
				<verse number="1">ದ್ವೀಪಗಳೇ, ನನ್ನ ಮಾತನ್ನು ಕೇಳಿರಿ. ದೂರದ ರಾಷ್ಟ್ರಗಳೇ, ಕಿವಿಗೊಡಿರಿ! ನನ್ನ ಜನನದ ಮುಂಚೆಯೇ ಯೆಹೋವ ದೇವರು ನನ್ನನ್ನು ಕರೆದರು. ತಾಯಿಯ ಉದರದಲ್ಲಿದ್ದಾಗಲೇ ನನಗೆ ಹೆಸರಿಟ್ಟರು.</verse>
				<verse number="2">ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ. ನನ್ನನ್ನು ಆತನು ನುಣುಪಾದ ಬಾಣವನ್ನಾಗಿ ರೂಪಿಸಿ, ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.</verse>
				<verse number="3">ಆತನು ನನಗೆ, “ನೀನು ನನ್ನ ಸೇವಕನು. ನಾನು ಮಹಿಮೆ ಹೊಂದಬೇಕಾದ ಇಸ್ರಾಯೇಲೂ ಆಗಿದ್ದೀ!” ಎಂದು ಹೇಳಿದನು.</verse>
				<verse number="4">ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ. ನನ್ನ ಶಕ್ತಿಯೆಲ್ಲ ಶೂನ್ಯವಾಯಿತು, ನನ್ನ ಸಾಮರ್ಥ್ಯವೆಲ್ಲ ವ್ಯರ್ಥವಾಯಿತು,” ಎಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಯೆಹೋವ ದೇವರ ಬಳಿಯಲ್ಲಿಯೂ, ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.</verse>
				<verse number="5">ಈಗ ಯೆಹೋವ ದೇವರು ಹೀಗೆ ಹೇಳುತ್ತಾರೆ, ಯಾಕೋಬ್ಯರನ್ನು ತನ್ನ ಬಳಿಗೆ ಕರೆತರುವಂತೆಯೂ, ಇಸ್ರಾಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳುವಂತೆಯೂ ದೇವರು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಯೆಹೋವ ದೇವರ ದೃಷ್ಟಿಯಲ್ಲಿ ಮಾನ್ಯನಾಗಿರುವೆನು. ನನ್ನ ದೇವರೇ ನನಗೆ ಬಲವು.</verse>
				<verse number="6">ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.”</verse>
				<verse number="7">ಮನಃಪೂರ್ವಕವಾಗಿ ತಿರಸ್ಕೃತನಾದವನೂ ಜನಾಂಗಕ್ಕೆ ಅಸಹ್ಯನೂ, ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೋವ ದೇವರ ನಂಬಿಗಸ್ತಿಕೆಯನ್ನೂ, ನೀನು ಆಯ್ದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ಕಂಡು ಅರಸರು ಎದ್ದು ನಿಲ್ಲುತ್ತಾರೆ, ಅಧಿಪತಿಗಳು ಸಹ ಆರಾಧಿಸುವರು.”</verse>
				<verse number="8">ಯೆಹೋವ ದೇವರು ಹೇಳುವುದೇನೆಂದರೆ: “ಪ್ರಸನ್ನತೆಯ ಕಾಲದಲ್ಲಿ ನಿನಗೆ ಸದುತ್ತರವನ್ನು ದಯಪಾಲಿಸಿದ್ದೇನೆ. ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದ್ದೇನೆ. ನಾನು ನಿನ್ನನ್ನು ಕಾಪಾಡಿ, ಭೂಮಿಯನ್ನು ಸ್ಥಾಪಿಸುವುದಕ್ಕೂ, ಹಾಳಾಗಿರುವ ಸ್ಥಳಗಳನ್ನು ಸೊತ್ತಾಗಿ ಹೊಂದುವುದಕ್ಕೂ, ಜನರ ಒಡಂಬಡಿಕೆಯನ್ನಾಗಿಯೂ ನೇಮಿಸಿದ್ದೇನೆ.</verse>
				<verse number="9">ನೀನು ಬಂಧಿತರಿಗೆ, ‘ಹೊರಗೆ ಬನ್ನಿರಿ,’ ಕತ್ತಲೆಯಲ್ಲಿರುವವರಿಗೆ, ‘ಬೆಳಕಿಗೆ ಬನ್ನಿರಿ,’ ಎಂದು ಹೇಳಬಹುದು. “ಅವರು ದಾರಿಗಳಲ್ಲಿ ಮೇಯಿಸುವರು. ಅವರ ಎಲ್ಲಾ ಎತ್ತರವಾದ ಪ್ರದೇಶಗಳೂ ಕೂಡ ಅವರಿಗೆ ಹುಲ್ಲುಗಾವಲಾಗಿರುವುವು.</verse>
				<verse number="10">ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಇರದು. ಝಳವೂ, ಬಿಸಿಲೂ ಬಡಿಯದು. ಏಕೆಂದರೆ ಅವರನ್ನು ಕರುಣಿಸುವ ದೇವರು ಅವರನ್ನು ನಡೆಸುತ್ತಾ, ನೀರುಕ್ಕುವ ಒರತೆಗಳ ಬಳಿಗೆ ತರುವರು.</verse>
				<verse number="11">ನನ್ನ ಬೆಟ್ಟಗಳನ್ನೆಲ್ಲಾ ಸಮ ದಾರಿಯನ್ನಾಗಿ ಮಾಡಿ, ನನ್ನ ರಾಜಮಾರ್ಗಗಳನ್ನು ಎತ್ತರಿಸುವೆನು.</verse>
				<verse number="12">ಇವರು ದೂರದಿಂದ ಬರುತ್ತಾರೆ. ಇವರು ಉತ್ತರದಿಂದ ಮತ್ತು ಪಶ್ಚಿಮದಿಂದ ಇವರು ಸೀನಿಮ್ ದೇಶದಿಂದ ಬರುತ್ತಿದ್ದಾರೆ.”</verse>
				<verse number="13">ಆಕಾಶವೇ, ಹರ್ಷಧ್ವನಿ ಮಾಡು; ಭೂಮಿಯೇ, ಉಲ್ಲಾಸಪಡು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವ ದೇವರು ತನ್ನ ಜನರನ್ನು ಆಧರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.</verse>
				<verse number="14">ಆದರೆ ಚೀಯೋನ್ ಎಂಬಾಕೆಯು, “ಯೆಹೋವ ದೇವರು ನನ್ನನ್ನು ತಳ್ಳಿಬಿಟ್ಟಿದ್ದಾನೆ. ನನ್ನ ಯೆಹೋವ ದೇವರು ನನ್ನನ್ನು ಮರೆತುಬಿಟ್ಟಿದ್ದಾನಲ್ಲಾ!” ಎಂದುಕೊಂಡಳು.</verse>
				<verse number="15">“ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಸ್ತ್ರೀ ತನ್ನ ಎದೆಹಾಲನ್ನು ಕುಡಿಯುವ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆಯುವುದಿಲ್ಲ.</verse>
				<verse number="16">ಇಗೋ, ನಾನು ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ. ನಿನ್ನ ಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.</verse>
				<verse number="17">ನಿನ್ನ ಮಕ್ಕಳು ತ್ವರೆಪಟ್ಟು ಬರುತ್ತಿದ್ದಾರೆ. ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟು ಹೋಗುವರು.</verse>
				<verse number="18">ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವ ದೇವರು ಹೇಳುವುದೇನೆಂದರೆ,” ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವೆ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿಕೊಳ್ಳುವೆ.</verse>
				<verse number="19">“ಏಕೆಂದರೆ ನಿನ್ನ ಹಾಳಾದ ಸ್ಥಳಗಳೂ ನಿನ್ನ ಏಕಾಂತ ಸ್ಥಳಗಳೂ ಕೆಡವಿಬಿದ್ದ ನಿನ್ನ ದೇಶವೂ ಈಗ ನಿವಾಸಿಗಳಿಗೆ ಇಕ್ಕಟ್ಟಾಗುವುವು. ನಿನ್ನನ್ನು ನುಂಗಿದವರು ದೂರವಾಗುವರು.</verse>
				<verse number="20">ನಿಮ್ಮ ದುಃಖದ ಸಮಯದಲ್ಲಿ ಜನಿಸಿದ ಮಕ್ಕಳು ‘ಸ್ಥಳವು ನನಗೆ ಇಕ್ಕಟ್ಟಾಯಿತು. ನಾನು ವಾಸಿಸುವುದಕ್ಕೆ ಸ್ಥಳಕೊಡು,’ ಎಂದು ಇನ್ನೂ ನಿಮ್ಮ ವಿಚಾರಣೆಯಲ್ಲಿ ಹೇಳುತ್ತಾರೆ.</verse>
				<verse number="21">‘ನನಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನು ದುಃಖಿತ ಮತ್ತು ಬಂಜೆಯಾಗಿದ್ದೆ; ನನ್ನನ್ನು ಗಡಿಪಾರು ಮಾಡಿ ತಿರಸ್ಕರಿಸಲಾಯಿತು. ಇವುಗಳನ್ನು ತಂದವರು ಯಾರು? ನಾನು ಒಬ್ಬಂಟಿಯಾಗಿ ಉಳಿದಿದ್ದೇನೆ, ಇವರನ್ನು ಸಾಕಿದವರು ಯಾರು? ಅವರೆಲ್ಲಿದ್ದರು?’ ” ಎಂದುಕೊಳ್ಳುವೆ.</verse>
				<verse number="22">ಸಾರ್ವಭೌಮ ಯೆಹೋವ ದೇವರು, ಇಂತೆನ್ನುತ್ತಾರೆ, “ಇಗೋ, ನಾನು ರಾಷ್ಟ್ರಗಳ ಕಡೆಗೆ ಕೈಯೆತ್ತಿ ಜನರಿಗೆ ನನ್ನ ಧ್ವಜವನ್ನು ಎತ್ತುವೆನು. ಅವರು ನಿನ್ನ ಪುತ್ರರನ್ನು ಕೈಹಿಡಿದು ತರುವರು. ನಿನ್ನ ಪುತ್ರಿಯರನ್ನು ಹೆಗಲ ಮೇಲೆ ತರುವರು.</verse>
				<verse number="23">ಅರಸರು ನಿನಗೆ ಸಾಕು ತಂದೆಗಳು. ಅವರ ರಾಣಿಯರು ನಿನಗೆ ದಾದಿಗಳಾಗುವರು. ಅವರು ಭೂಮಿಯ ಕಡೆಗೆ ತಮ್ಮ ಮುಖವನ್ನು ಬಾಗಿಸಿ, ಅಡ್ಡಬಿದ್ದು, ನಿನ್ನ ಪಾದದ ಧೂಳನ್ನು ನೆಕ್ಕುವರು. ಆಗ ನಾನೇ ಯೆಹೋವ ಎಂದು ನೀನು ತಿಳಿದುಕೊಳ್ಳುವೆ. ಏಕೆಂದರೆ ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿಕೆಗೆ ಈಡಾಗರು.”</verse>
				<verse number="24">ಶೂರನ ಕೈಯೊಳಗಿಂದ ಕೊಳ್ಳೆಯನ್ನು ತೆಗೆದುಕೊಳ್ಳಬಹುದೋ? ಭಯಂಕರನಿಂದ ಸೆರೆಯವರನ್ನು ಬಿಡಿಸಬಹುದೋ?</verse>
				<verse number="25">ಆದರೆ ಯೆಹೋವ ದೇವರು ಹೀಗೆನ್ನುತ್ತಾರೆ: “ಶೂರನ ಸೆರೆಯವರು ಅಪಹರಿಸಲಾಗುವರು. ಭೀಕರನ ಕೊಳ್ಳೆ ಕಸಿದುಕೊಳ್ಳಲಾಗುವುದು. ಏಕೆಂದರೆ ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ, ನಿನ್ನ ಮಕ್ಕಳನ್ನು ನಾನು ರಕ್ಷಿಸುವೆನು.</verse>
				<verse number="26">ನಿನ್ನ ಹಿಂಸಕರು ಸ್ವಮಾಂಸವನ್ನೇ ಭುಜಿಸುವಂತೆ ಅನುಮತಿಸುವೆನು. ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ಸ್ವರಕ್ತವನ್ನೇ ಕುಡಿದು ಅಮಲೇರುವರು. ಆಗ ಯೆಹೋವನಾದ ನಾನೇ ನಿನ್ನ ರಕ್ಷಕನೂ, ನಿನ್ನ ವಿಮೋಚಕನೂ, ಯಾಕೋಬ್ಯರ ಶೂರನೂ ಎಂದು ನರಮಾನವರೆಲ್ಲರಿಗೂ ಗೊತ್ತಾಗುವುದು.”</verse>
			</chapter>
			<chapter number="50">
				<verse number="1">ಯೆಹೋವ ದೇವರು ಹೇಳುವುದೇನೆಂದರೆ, “ನಾನು ಬಿಟ್ಟುಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೆನು? ನಿಮ್ಮ ಪಾಪಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ. ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.</verse>
				<verse number="2">ನಾನು ಬಂದಾಗ ಏಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಕೈ ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೆ ನನಗೆ ಬಿಡಿಸುವುದಕ್ಕೆ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಮರುಭೂಮಿಯನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ಮೀನುಗಳು ಬಾಯಾರಿ, ಸತ್ತು ನಾರುವುವು.</verse>
				<verse number="3">ನಾನು ಆಕಾಶಗಳಿಗೆ ಅಂಧಕಾರವನ್ನು ಹೊದಿಸಿ, ಗೋಣಿತಟ್ಟನ್ನು ಅದರ ಹೊದಿಕೆಯನ್ನಾಗಿ ಮಾಡುವೆನು.”</verse>
				<verse number="4">ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವೆ ಎಂಬುದನ್ನು ನಾನು ತಿಳಿಯುವ ಹಾಗೆ ಸಾರ್ವಭೌಮ ಯೆಹೋವ ದೇವರು ಶಿಕ್ಷಿತರ ನಾಲಿಗೆಯನ್ನು ನನಗೆ ಕೊಟ್ಟಿದ್ದಾರೆ. ಆತನು ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ, ಸುರಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಎಚ್ಚರಗೊಳಿಸುತ್ತಾರೆ.</verse>
				<verse number="5">ಸಾರ್ವಭೌಮ ಯೆಹೋವ ದೇವರು ನನ್ನ ಕಿವಿಯನ್ನು ತೆರೆದಿದ್ದಾರೆ, ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ.</verse>
				<verse number="6">ನಾನು ಹೊಡೆಯುವವರಿಗೆ ಬೆನ್ನನ್ನೂ, ಕೂದಲು ಕೀಳುವವರಿಗೆ ನನ್ನ ಗಡ್ಡವನ್ನೂ ಒಡ್ಡಿದೆನು. ನನ್ನ ಮುಖವನ್ನು ನಿಂದೆಗೂ, ಉಗುಳುವಿಕೆಗೂ ಮರೆಮಾಡಲಿಲ್ಲ.</verse>
				<verse number="7">ಸಾರ್ವಭೌಮ ಯೆಹೋವ ದೇವರು, ನನಗೆ ಸಹಾಯ ಮಾಡುವನು. ಆದಕಾರಣ ನಾನು ಅವಮಾನ ಪಡುವುದಿಲ್ಲ. ಆದ್ದರಿಂದ ನನ್ನ ಮುಖವನ್ನು ಕಗ್ಗಲ್ಲಿನಂತೆ ಮಾಡಿಕೊಂಡಿದ್ದೇನೆ. ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.</verse>
				<verse number="8">ನನಗೆ ನೀತಿ ನಿರ್ಣಯಿಸುವಾತನು ಸಮೀಪದಲ್ಲಿಯೇ ಇದ್ದಾನೆ, ನನ್ನೊಂದಿಗೆ ವ್ಯಾಜ್ಯವಾಡುವವರು ಯಾರು? ನಾವು ಪರಸ್ಪರ ಎದುರಿಸೋಣ! ನನ್ನ ಎದುರಾಳಿ ಯಾರು? ಅವನು ನನ್ನ ಸಮೀಪಕ್ಕೆ ಬರಲಿ.</verse>
				<verse number="9">ಇಗೋ, ಸಾರ್ವಭೌಮ ಯೆಹೋವ ದೇವರು ನನಗೆ ಸಹಾಯ ಮಾಡುವರು. ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು. ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವುದು.</verse>
				<verse number="10">ನಿಮ್ಮೊಳಗೆ ಯೆಹೋವ ದೇವರಿಗೆ ಭಯಪಟ್ಟು, ಅವರ ಸೇವಕನ ಮಾತನ್ನು ಕೇಳಿ, ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? ಅವನು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಟ್ಟು, ತನ್ನ ದೇವರ ಮೇಲೆ ಆತುಕೊಳ್ಳಲಿ.</verse>
				<verse number="11">ಕಿಡಿಗಳಿಂದ ಆವರಿಸಿಕೊಳ್ಳುವವರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಕೈಯಿಂದ ನಿಮಗಾಗುವುದು ಇದೇ. ನೀವು ಯಾತನೆಯಲ್ಲಿ ಬಿದ್ದುಕೊಂಡಿರುವಿರಿ.</verse>
			</chapter>
			<chapter number="51">
				<verse number="1">ನೀತಿಯನ್ನು ಹಿಂಬಾಲಿಸುವವರೇ, ಯೆಹೋವ ದೇವರನ್ನು ಹುಡುಕುವವರೇ, ನನ್ನ ಕಡೆಗೆ ಕಿವಿಗೊಡಿರಿ. ನಿಮ್ಮನ್ನು ಯಾವ ಬಂಡೆಯೊಳಗಿಂದ ಒಡೆದು ಕಡಿದಿರುತ್ತಾರೋ ಮತ್ತು ಯಾವ ಗುಂಡಿಯೊಳಗಿಂದ ಅಗೆದಿರುತ್ತಾರೋ ಆ ಬಂಡೆಯಾದಾತನನ್ನು ನೋಡಿರಿ.</verse>
				<verse number="2">ನಿಮ್ಮ ತಂದೆಯಾದ ಅಬ್ರಹಾಮನನ್ನು ಮತ್ತು ನಿಮ್ಮನ್ನು ಹೆತ್ತ ಸಾರಳನ್ನೂ ದೃಷ್ಟಿಸಿರಿ. ನಾನು ಅವನನ್ನು ಕರೆದಾಗ ಅವನು ಒಬ್ಬನೇ ಮನುಷ್ಯ, ನಾನು ಅವನನ್ನು ಆಶೀರ್ವದಿಸಿ, ವೃದ್ಧಿಗೊಳಿಸಿದೆನು.</verse>
				<verse number="3">ಯೆಹೋವ ದೇವರು ಚೀಯೋನನ್ನು ಸಂತೈಸೇ ಸಂತೈಸುವರು. ಅವರು ಅದರ ಹಾಳಾದ ಸ್ಥಳಗಳನ್ನು ಕರುಣೆಯಿಂದ ನೋಡುವರು. ಅದರ ಮರುಭೂಮಿಯನ್ನು ಏದೆನ್ ಹಾಗೆಯೂ, ಹಾಳು ಪ್ರದೇಶವನ್ನು ಯೆಹೋವ ದೇವರ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ, ಉಲ್ಲಾಸವೂ, ಉಪಕಾರ ಸ್ತುತಿಯೂ, ಇಂಪಾದ ಸ್ವರವೂ ಕಂಡು ಬರುವುವು.</verse>
				<verse number="4">ನನ್ನ ಜನರೇ, ಕೇಳಿರಿ. ನನ್ನ ಜನಾಂಗವೇ, ನನ್ನ ಕಡೆಗೆ ಕಿವಿಗೊಡಿರಿ. ಏಕೆಂದರೆ ನಿಯಮವು ನನ್ನಿಂದ ಹೊರಡುವುದು ಮತ್ತು ನನ್ನ ನ್ಯಾಯವನ್ನು ಜನಾಂಗಕ್ಕೆ ಬೆಳಕನ್ನಾಗಿ ಮಾಡುವೆನು.</verse>
				<verse number="5">ನನ್ನ ನೀತಿಯು ತ್ವರೆಯಾಗಿ ಸಮೀಪಿಸಿತು. ನನ್ನ ರಕ್ಷಣೆಯು ಹೊರಟಿತು ಮತ್ತು ನನ್ನ ಕೈ ಜನಾಂಗಕ್ಕೆ ನ್ಯಾಯವನ್ನು ತೀರಿಸುವುದು. ನನ್ನ ಭುಜದ ಮೇಲೆ ಭರವಸೆ ಇಟ್ಟು, ದ್ವೀಪಗಳು ನನಗೋಸ್ಕರ ಕಾದುಕೊಂಡಿರುತ್ತವೆ.</verse>
				<verse number="6">ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಏಕೆಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವುವು. ಭೂಮಿಯು ಹಳೆಯ ಬಟ್ಟೆಯಂತಾಗುವುದು ಮತ್ತು ಅದರಲ್ಲಿ ವಾಸಿಸುವವರು ಸೊಳ್ಳೆಗಳೋಪಾದಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವುದು, ನನ್ನ ನೀತಿಯು ಎಂದಿಗೂ ರದ್ದಾಗದು.</verse>
				<verse number="7">ನೀತಿಯನ್ನು ಅರಿತು, ನನ್ನ ನಿಯಮವನ್ನು ಹೃದಯದಲ್ಲಿಟ್ಟುಕೊಂಡಿರುವ ಜನರೇ, ನನಗೆ ಕಿವಿಗೊಡಿರಿ. ಮನುಷ್ಯರ ನಿಂದೆಗೆ ಭಯಪಡಬೇಡಿರಿ, ಅವರ ದೂಷಣೆಗೆ ಹೆದರಬೇಡಿರಿ.</verse>
				<verse number="8">ಏಕೆಂದರೆ ನುಸಿಯು ಬಟ್ಟೆಯನ್ನು ತಿನ್ನುವಂತೆ, ಅವರನ್ನು ತಿಂದುಬಿಡುವುದು ಮತ್ತು ಹುಳವು ಅವರನ್ನು ಉಣ್ಣೆಯಂತೆ ತಿನ್ನುವುದು. ಆದರೆ ನನ್ನ ನೀತಿಯು ಶಾಶ್ವತವಾಗಿರುವುದು ಮತ್ತು ನನ್ನ ರಕ್ಷಣೆಯು ತಲತಲಾಂತರಗಳಿಗೂ ಇರುವುದು.</verse>
				<verse number="9">ಯೆಹೋವ ದೇವರ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು ಬಲವನ್ನು ಧರಿಸಿಕೋ. ಹಿಂದಿನ ಜನಾಂಗಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?</verse>
				<verse number="10">ಸಮುದ್ರವನ್ನೂ, ದೊಡ್ಡ ಅಗಾಧದ ನೀರನ್ನೂ ಬತ್ತಿಸಿ, ವಿಮುಕ್ತರಾದವರು, ಹಾದು ಹೋಗುವುದಕ್ಕೆ ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?</verse>
				<verse number="11">ಆದಕಾರಣ ಯೆಹೋವ ದೇವರು ವಿಮೋಚಿಸಿದವರು, ಹಿಂದಿರುಗಿಕೊಂಡು ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು, ಉತ್ಸಾಹ ಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು. ದುಃಖವೂ, ನಿಟ್ಟುಸಿರೂ ಓಡಿಹೋಗುವುವು.</verse>
				<verse number="12">“ನಾನೇ, ನಾನೇ ನಿಮ್ಮನ್ನು ಸಂತೈಸುವವನಾಗಿದ್ದೇನೆ. ಹಾಗಾದರೆ ಸಾಯುವ ಮನುಷ್ಯನಿಗೂ, ಹುಲ್ಲಿನಂತ್ತಿರುವ ಮಾನವನಿಗೂ ಭಯಪಡುವ ನೀನು ಯಾರು?</verse>
				<verse number="13">ಆಕಾಶವನ್ನು ಹಾಸಿ, ಭೂಮಿಯ ಅಸ್ತಿವಾರವನ್ನು ಹಾಕಿ, ನಿನ್ನನ್ನು ಉಂಟುಮಾಡಿದ ಯೆಹೋವ ದೇವರನ್ನು ನೀನು ಮರೆತುಬಿಟ್ಟು, ಹಿಂಸಕನ ಉಗ್ರಕ್ಕೆ ಎಡೆಬಿಡದೆ ಪ್ರತಿದಿನವೂ ಅವನು ನಾಶಪಡಿಸುವನೋ ಎಂಬಂತೆ ಅಂಜಿಕೊಂಡಿದ್ದೀಯಲ್ಲಾ, ಆ ಹಿಂಸಕನ ಕೋಪವು ಎಲ್ಲಿ?</verse>
				<verse number="14">ಸೆರೆಯಲ್ಲಿ ಕುಗ್ಗಿರುವವನು ತಾನು ಸಾಯದಂತೆಯೂ, ತನಗೆ ಆಹಾರದ ಕೊರತೆ ಇರದಂತೆಯೂ, ತಾನು ಬಿಡುಗಡೆ ಹೊಂದುವಂತೆಯೂ ಆತುರಪಡುತ್ತಾನೆ.</verse>
				<verse number="15">ಆದರೆ ತೆರೆಗಳು ಬೋರ್ಗರೆಯುವಾಗ, ಸಮುದ್ರವನ್ನು ವಿಭಾಗಿಸಿದ ನಿನ್ನ ದೇವರಾಗಿರುವ ಯೆಹೋವ ದೇವರು ನಾನೇ, ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು.</verse>
				<verse number="16">ಆಕಾಶಗಳನ್ನು ನೆಡುವುದಕ್ಕೂ, ಭೂಮಿಯ ಅಸ್ತಿವಾರವನ್ನು ಹಾಕುವುದಕ್ಕೂ, ಚೀಯೋನಿಗೆ ನೀನು ನನ್ನ ಜನರೆಂದು ಹೇಳುವುದಕ್ಕೂ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿಟ್ಟು, ನನ್ನ ಕೈ ನೆರಳಿನಿಂದ ನಿನ್ನನ್ನು ಮುಚ್ಚಿದ್ದೇನೆ.”</verse>
				<verse number="17">ಯೆಹೋವ ದೇವರ ಕೈಯಿಂದ ಆತನ ಕೋಪದ ಪಾತ್ರೆಯನ್ನು ಕುಡಿದ ಯೆರೂಸಲೇಮೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಎದ್ದೇಳು! ನೀನು ತತ್ತರಗೊಳಿಸುವಂಥ ಪಾತ್ರೆಯಲ್ಲಿದ್ದ ಮಡ್ಡಿಯನ್ನು ಕುಡಿದು ಹೀರಿಬಿಟ್ಟಿದ್ದೀ.</verse>
				<verse number="18">ಅವಳು ಹೆತ್ತ ಎಲ್ಲಾ ಪುತ್ರರಲ್ಲಿ ಅವಳನ್ನು ನಡೆಸುವುದಕ್ಕೆ ಒಬ್ಬನೂ ಇಲ್ಲ. ಅವಳು ಬೆಳೆಯಿಸಿದ ಎಲ್ಲಾ ಪುತ್ರರಲ್ಲಿ, ಅವಳ ಕೈಯನ್ನು ಹಿಡಿಯುವವನು ಒಬ್ಬನೂ ಇಲ್ಲ.</verse>
				<verse number="19">ಈ ಎರಡು ಸಂಗತಿಗಳು ನಿನಗೆ ಸಂಭವಿಸಿವೆ, ನಿನಗೋಸ್ಕರ ಚಿಂತಿಸುವವರು ಯಾರಿದ್ದಾರೆ? ನಾಶನವೋ ಸಂಹಾರವೋ ಕ್ಷಾಮವೋ ಖಡ್ಗವೋ, ಯಾರು ನಿನ್ನನ್ನು ಸಂತೈಸುವರು?</verse>
				<verse number="20">ನಿನ್ನ ಪುತ್ರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ, ಎಲ್ಲಾ ಬೀದಿಗಳು ಕೂಡುವ ಚೌಕಗಳಲ್ಲಿ ಅವರು ಬಿದ್ದಿದ್ದಾರೆ. ಅವರು ಯೆಹೋವ ದೇವರ ರೋಷದಿಂದಲೂ, ನಿನ್ನ ದೇವರ ಗದರಿಕೆಯಿಂದಲೂ ತುಂಬಿದ್ದಾರೆ.</verse>
				<verse number="21">ನೀನು ಹಿಂಸೆಗೊಳಗಾಗಿದ್ದೀ. ಕುಡಿದು ಅಮಲೇರಿದ್ದೀ. ಆದರೆ ದ್ರಾಕ್ಷಾರಸದಿಂದಲ್ಲ. ಆದ್ದರಿಂದ ಈಗ ಇದನ್ನು ಕೇಳು.</verse>
				<verse number="22">ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ, ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, “ನಾನು ನಿನ್ನ ಕೈಯೊಳಗಿಂದ ತತ್ತರಿಸುವಂಥ ಪಾತ್ರೆಯನ್ನೂ, ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ. ಇನ್ನು ಮೇಲೆ ನೀನು ಅದನ್ನು ತಿರುಗಿ ಕುಡಿಯುವುದೇ ಇಲ್ಲ.</verse>
				<verse number="23">ಆದರೆ ನಾವು ಹಾದುಹೋಗುವಂತೆ, ನೀನು ನೆಲಕ್ಕೆ ಬೀಳು ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ ಮತ್ತು ನೀನು ಹಾದುಹೋದವರಿಗೆ ನಿನ್ನ ಶರೀರವನ್ನು ನೆಲದಂತೆಯೂ, ಬೀದಿಯಂತೆಯೂ ಮಾಡಿಕೊಂಡಿಯಲ್ಲಾ.”</verse>
			</chapter>
			<chapter number="52">
				<verse number="1">ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ವೈಭವದ ಉಡುಪುಗಳನ್ನು ಹಾಕಿಕೋ ಏಕೆಂದರೆ ಇಂದಿನಿಂದ ಸುನ್ನತಿ ಇಲ್ಲದವರೂ, ಅಶುದ್ಧರೂ ನಿನ್ನೊಳಗೆ ಬರುವುದಿಲ್ಲ.</verse>
				<verse number="2">ಯೆರೂಸಲೇಮೇ ಧೂಳನ್ನು ಝಾಡಿಸಿಕೋ, ಎದ್ದು ಆಸನದ ಮೇಲೆ ಕುಳಿತುಕೋ. ಸೆರೆಯಾದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನಗಳನ್ನು ಬಿಚ್ಚಿಕೋ.</verse>
				<verse number="3">ಏಕೆಂದರೆ ಯೆಹೋವ ದೇವರು ಹೇಳುವುದೇನೆಂದರೆ: “ನಿಮ್ಮನ್ನು ನೀವೇ ನಿಷ್ಪಲವಾಗಿ ಮಾಡಿಕೊಂಡಿರಿ. ಹಣವಿಲ್ಲದೆ ನೀವು ವಿಮೋಚನೆ ಹೊಂದುವಿರಿ.”</verse>
				<verse number="4">ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: “ನನ್ನ ಜನರು ಪೂರ್ವದಲ್ಲಿ ಇಳುಕೊಳ್ಳುವುದಕ್ಕೆ ಈಜಿಪ್ಟಿಗೆ ಹೋದರು. ಅಸ್ಸೀರಿಯದವರು ಕಾರಣವಿಲ್ಲದೆ ಅವರಿಗೆ ಬಾಧೆಪಡಿಸಿದರು.</verse>
				<verse number="5">“ಈಗ ನನಗೆ ಇಲ್ಲಿ ಏನಿದೆ?” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ಜನರನ್ನು ವ್ಯರ್ಥವಾಗಿ ಒಯ್ದಿದ್ದಾರೆ. ಆಳುವವರು ಅವರನ್ನು ಗೋಳಾಡಿಸುತ್ತಿದ್ದಾರೆ. ನನ್ನ ನಾಮವು ಪ್ರತಿದಿನವೂ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ! ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="6">ಆದ್ದರಿಂದ ನನ್ನ ಜನರು ನನ್ನ ಹೆಸರನ್ನು ತಿಳಿದುಕೊಳ್ಳುವರು. ಹೀಗೆ ಆ ದಿನದಲ್ಲಿ ಮಾತನಾಡಿದಾತನು ನಾನೇ, ಅದು ನಾನೇ ಎಂದು ಅವರು ಗ್ರಹಿಸುವರು.”</verse>
				<verse number="7">ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಒಳ್ಳೆಯ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವವನ ಪಾದಗಳು ಪರ್ವತಗಳ ಮೇಲೆ ಎಷ್ಟೊಂದು ಅಂದವಾಗಿವೆ!</verse>
				<verse number="8">ನಿನ್ನ ಕಾವಲುಗಾರರು ಧ್ವನಿಯನ್ನೆತ್ತುವರು. ಆ ಸ್ವರದೊಂದಿಗೆ ಒಟ್ಟಾಗಿ ಅವರು ಹಾಡುವರು. ಏಕೆಂದರೆ ಯೆಹೋವ ದೇವರು ಚೀಯೋನನ್ನು ತಿರುಗಿ ತರುವಾಗ, ಅವರು ಅದನ್ನು ತಮ್ಮ ಕಣ್ಣಿನಿಂದಲೇ ಕಾಣುವರು.</verse>
				<verse number="9">ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ, ಒಟ್ಟಾಗಿ ಹಾಡಿರಿ. ಏಕೆಂದರೆ ಯೆಹೋವ ದೇವರು ತನ್ನ ಪ್ರಜೆಗಳನ್ನು ಸಂತೈಸಿದ್ದಾರೆ. ಆತನು ಯೆರೂಸಲೇಮನ್ನು ವಿಮೋಚಿಸಿದ್ದಾರೆ.</verse>
				<verse number="10">ಯೆಹೋವ ದೇವರು ತಮ್ಮ ಪವಿತ್ರ ಬಾಹುವನ್ನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತೋರಿಸಿಕೊಂಡಿದ್ದಾನೆ ಮತ್ತು ಭೂಮಿಯ ಅಂತ್ಯದವರೆಗೂ ನಮ್ಮ ದೇವರ ರಕ್ಷಣೆಯನ್ನು ಕಾಣುವರು.</verse>
				<verse number="11">ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ. ಅವಳ ಮಧ್ಯದಿಂದ ಹೊರಗೆ ಹೋಗಿರಿ. ಯೆಹೋವ ದೇವರ ದೇವಾಲಯದ ಪಾತ್ರೆಗಳನ್ನು ಹೊರುವವರೇ, ನೀವು ಶುದ್ಧರಾಗಿರಿ.</verse>
				<verse number="12">ನೀವು ತ್ವರೆಯಾಗಿ ಹೋಗುವುದಿಲ್ಲ, ಓಡಿ ಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರೇ ನಿಮ್ಮ ಮುಂದೆ ಹೋಗುವರು, ಇಸ್ರಾಯೇಲಿನ ದೇವರು ನಿಮ್ಮ ಹಿಂದೆ ಕಾವಲು ಕಾಯುವರು.</verse>
				<verse number="13">ನನ್ನ ಸೇವಕನು ವಿವೇಕಿಯಾಗಿ ಕಾರ್ಯವನ್ನು ಸಾಧಿಸಿ, ಅವನು ಉನ್ನತನಾಗಿ ಮೇಲೆಕ್ಕೇರಿ ಮಹೋನ್ನತನಾಗಿರುವನು.</verse>
				<verse number="14">ಅವನ ಮುಖವು ಮನುಷ್ಯರಿಗಿಂತಲೂ, ಅವನ ಆಕಾರವು ನರಪುತ್ರರಿಗಿಂತಲೂ ಕುರೂಪವಾಗಿರುವುದನ್ನು ನೋಡಿ ಹೇಗೆ ಆಶ್ಚರ್ಯಪಟ್ಟರೋ,</verse>
				<verse number="15">ಹಾಗೆಯೇ ಅನೇಕ ಜನಾಂಗಗಳನ್ನು ಆತನು ವಿಸ್ಮಯಗೊಳಿಸುವನು. ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳುವರು. ಏಕೆಂದರೆ ಅವರಿಗೆ ತಿಳಿಸದಿರುವ ಸಂಗತಿಯನ್ನು ಅವರು ನೋಡುವರು, ಕೇಳದೇ ಇರುವುದನ್ನು ಗ್ರಹಿಸಿಕೊಳ್ಳುವರು.</verse>
			</chapter>
			<chapter number="53">
				<verse number="1">ನಮ್ಮ ಸುದ್ದಿಯನ್ನು ಯಾರು ನಂಬಿದ್ದಾರೆ? ಯೆಹೋವ ದೇವರ ಬಾಹುವು ಯಾರಿಗೆ ಪ್ರಕಟವಾಯಿತು?</verse>
				<verse number="2">ಅವನು ಚಿಗುರಿನಂತೆಯೂ, ಒಣ ನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಯೆಹೋವ ದೇವರ ಮುಂದೆ ಬೆಳೆಯುವನು. ಅವನಿಗೆ ಯಾವ ಸೌಂದರ್ಯವಾಗಲಿ ಇಲ್ಲವೆ ಘನತೆಯಾಗಲಿ ಇರಲಿಲ್ಲ. ನಾವು ಅವನನ್ನು ನೋಡಿದಾಗ, ಅವನಲ್ಲಿ ಆಕರ್ಷಿಸತಕ್ಕ ಯಾವ ಚಂದವು ಇರಲಿಲ್ಲ.</verse>
				<verse number="3">ಆತನು ತಿರಸ್ಕೃತನೂ ಮಾನವಕುಲದಿಂದ ನಿರಾಕರಿಸಲಾದವನೂ, ದುಃಖಿತ ಮನುಷ್ಯನೂ, ನೋವನ್ನು ಅನುಭವಿಸಿದವನೂ ಆಗಿದ್ದನು. ನಾವು ನಮ್ಮ ಮುಖಗಳನ್ನು ಆತನಿಂದ ಮರೆಮಾಡಿಕೊಂಡೆವು. ಆತನು ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಆತನನ್ನು ಅತ್ಯಲ್ಪವಾಗಿ ಎಣಿಸಿದೆವು.</verse>
				<verse number="4">ನಿಶ್ಚಯವಾಗಿಯೂ ಆತನು ನಮ್ಮ ನೋವನ್ನು ತೆಗೆದುಕೊಂಡನು; ಹೌದು, ನಮ್ಮ ದುಃಖಗಳನ್ನು ಸಹ ಹೊತ್ತುಕೊಂಡನು. ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಶಿಕ್ಷೆಹೊಂದಿದವನು, ಬಾಧೆಪಟ್ಟವನು ಎಂದು ಭಾವಿಸಿಕೊಂಡೆವು.</verse>
				<verse number="5">ನಮ್ಮ ಉಲ್ಲಂಘನೆಗಳಿಗಾಗಿ ಆತನು ತಿವಿತಕ್ಕೆ ಒಳಗಾದನು. ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಿಹೋದನು. ನಮಗೆ ಸಮಾಧಾನವನ್ನು ತಂದ ದಂಡನೆಯು ಆತನ ಮೇಲಿತ್ತು. ಆತನ ಗಾಯಗಳಿಂದ ನಮಗೆ ಗುಣವಾಯಿತು.</verse>
				<verse number="6">ನಾವೆಲ್ಲರೂ ದಾರಿತಪ್ಪಿದ ಕುರಿಗಳಂತೆ ಇದ್ದೆವು. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು. ಯೆಹೋವ ದೇವರು ನಮ್ಮ ಎಲ್ಲಾ ದುಷ್ಕೃತ್ಯಗಳನ್ನು ಆತನ ಮೇಲೆ ಹಾಕಿದರು.</verse>
				<verse number="7">ಆತನು ದಬ್ಬಾಳಿಕೆಗೆ ಗುರಿಯಾಗಿ ಬಾಧೆಪಟ್ಟನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಬಲಿಗೆ ಎಳೆದುಕೊಂಡು ಹೋಗುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.</verse>
				<verse number="8">ಆತನನ್ನು ದಬ್ಬಾಳಿಕೆಯಿಂದಲೂ, ನ್ಯಾಯತೀರ್ಪಿನಿಂದಲೂ ಎಳೆದುಕೊಂಡು ಹೋದರು. ಆತನ ಕಾಲದವರಲ್ಲಿ ಯಾರು ಮರುಗಿದರು? ಏಕೆಂದರೆ ಆತನನ್ನು ಜೀವಿತರ ಲೋಕದಿಂದ ತೆಗೆದುಹಾಕಿದರು. ನನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಶಿಕ್ಷೆಯನ್ನು ಹೊಂದಿದನು.</verse>
				<verse number="9">ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು.</verse>
				<verse number="10">ಆದರೂ ಆತನನ್ನು ಜಜ್ಜುವುದು ಯೆಹೋವ ದೇವರ ಚಿತ್ತವಾಗಿತ್ತು. ಯೆಹೋವ ದೇವರು ಆತನನ್ನು ಸಂಕಟಕ್ಕೆ ಒಳಪಡಿಸಿದನು. ಯೆಹೋವ ದೇವರು ಆತನ ಪ್ರಾಣವನ್ನು ದೋಷಪರಿಹಾರದ ಬಲಿಯನ್ನಾಗಿ ಮಾಡುವಾಗ, ಆತನು ತನ್ನ ಸಂತಾನವನ್ನು ಕಾಣುವನು. ಆತನು ತನ್ನ ದಿವಸಗಳನ್ನು ಉದ್ದ ಮಾಡಿದ ಮೇಲೆ ಮತ್ತು ಯೆಹೋವ ದೇವರ ಚಿತ್ತವು ಆತನ ಕೈಯಲ್ಲಿ ಸಫಲವಾಗುವುದು.</verse>
				<verse number="11">ಆತನು ತನ್ನ ಪ್ರಾಣದ ವೇದನೆಯನ್ನು ಸಹಿಸಿದ ತರುವಾಯ, ಜೀವದ ಬೆಳಕನ್ನು ಕಂಡು ತೃಪ್ತನಾಗುವನು. ತನ್ನ ತಿಳುವಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕರಿಗೆ ನೀತಿವಂತನಾಗಿ ನಿರ್ಣಯಿಸುವನು. ಏಕೆಂದರೆ ಆತನೇ ಅವರ ಅಪರಾಧಗಳನ್ನು ಹೊತ್ತುಕೊಳ್ಳುವನು.</verse>
				<verse number="12">ಆದ್ದರಿಂದ ನಾನು ಆತನಿಗೋಸ್ಕರ ದೊಡ್ಡವರೊಂದಿಗೆ ಪಾಲನ್ನು ಕೊಡುವೆನು ಮತ್ತು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲು ಹಂಚಿಕೊಳ್ಳುವನು. ಏಕೆಂದರೆ ಆತನು ತನ್ನ ಪ್ರಾಣವನ್ನು ಮರಣದವರೆಗೂ ಹೊಯ್ದುಬಿಟ್ಟು, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡನು. ಅನೇಕರ ಪಾಪವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾಪನೆ ಮಾಡಿದನು.</verse>
			</chapter>
			<chapter number="54">
				<verse number="1">“ಬಂಜೆಯೇ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆ ಪಡದವಳೇ, ಸ್ವರವೆತ್ತಿ ಹರ್ಷದಿಂದ ಕೂಗು! ಏಕೆಂದರೆ ಗಂಡನುಳ್ಳವಳಿಗಿಂತ ಗಂಡ ಬಿಟ್ಟವಳಿಗೆ ಮಕ್ಕಳು ಹೆಚ್ಚು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="2">“ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ಮತ್ತು ನಿವಾಸದ ಪರದೆಗಳು ಹರಡಲಿ. ಹಿಂದೆಗೆಯಬೇಡ; ನಿನ್ನ ಗುಡಾರದ ಹಗ್ಗಗಳನ್ನು ಉದ್ದಮಾಡಿ, ಅದರ ಗೂಟಗಳನ್ನು ಬಲಪಡಿಸು.</verse>
				<verse number="3">ನೀನು ಬಲಗಡೆಗೂ, ಎಡಗಡೆಗೂ ಹಬ್ಬಿಕೊಳ್ಳುವೆ. ನಿನ್ನ ಸಂತಾನವು ಜನಾಂಗಗಳನ್ನು ವಶಪಡಿಸಿಕೊಂಡು, ಹಾಳಾದ ಪಟ್ಟಣಗಳನ್ನು ನಿವಾಸವಾಗ ಮಾಡುವುದು.</verse>
				<verse number="4">“ಹೆದರಬೇಡ, ಏಕೆಂದರೆ ನಿನಗೆ ನಾಚಿಕೆಯಾಗುವುದಿಲ್ಲ. ಗಾಬರಿಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತುಬಿಡುವೆ. ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವುದಿಲ್ಲ.</verse>
				<verse number="5">ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು. ನಿನ್ನ ವಿಮೋಚಕನು ಇಸ್ರಾಯೇಲಿನ ಪರಿಶುದ್ಧನೇ. ಸಮಸ್ತ ಭೂಮಿಯ ದೇವರು ಎಂದು ಆತನನ್ನು ಕರೆಯಲಾಗುತ್ತದೆ.</verse>
				<verse number="6">ನೀನು ತ್ಯಜಿಸಿದ ಮನನೊಂದಿರುವ ಯೌವನದ ಪತ್ನಿಯ ಹಾಗೆ ತಿರಸ್ಕಾರಹೊಂದಿರುವೆ. ಯೆಹೋವ ದೇವರು ನಿನ್ನನ್ನು ಕರೆದಿದ್ದಾನೆ, ಎಂದು ನಿನ್ನ ದೇವರು ಹೇಳುತ್ತಾರೆ.</verse>
				<verse number="7">ಕ್ಷಣಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ. ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು.</verse>
				<verse number="8">ನನಗೆ ಬೇಸರವಾದಾಗ ನನ್ನ ಮುಖವನ್ನು ನಿನಗೆ ಕ್ಷಣಮಾತ್ರವೇ ಮರೆಮಾಡಿಕೊಂಡೆನು. ಆದರೆ ಶಾಶ್ವತವಾದ ದಯೆಯಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿದ್ದೇನೆ, ಎಂದು ನಿನ್ನ ವಿಮೋಚಕನಾದ ಯೆಹೋವ ದೇವರು ಹೇಳುತ್ತಾರೆ.</verse>
				<verse number="9">“ಇದು ನನಗೆ ನೋಹನ ಕಾಲದ ಪ್ರಳಯದಂತಿದೆ. ನೋಹನ ಕಾಲದ ಪ್ರಳಯವು ಪುನಃ ಭೂಮಿಯನ್ನು ಆವರಿಸುವುದಿಲ್ಲ ಎಂದು ನಾನು ಪ್ರಮಾಣ ಮಾಡಿದ ಹಾಗೆಯೇ, ಇನ್ನು ನಿನ್ನ ಮೇಲೆ ಕೋಪಗೊಳ್ಳುವುದಿಲ್ಲ, ನಿನ್ನನ್ನು ಗದರಿಸುವುದಿಲ್ಲ, ಎಂದು ಪ್ರಮಾಣ ಮಾಡಿದ್ದೇನೆ.</verse>
				<verse number="10">ಪರ್ವತಗಳು ಸ್ಥಳವನ್ನು ಬಿಟ್ಟು ಹೋದರೂ, ಬೆಟ್ಟಗಳು ಕದಲಿ ಹೋದರೂ, ನನ್ನ ಕುಂದದ ಪ್ರೀತಿಯು ನಿನ್ನನ್ನು ಬಿಟ್ಟು ಹೋಗದು, ನನ್ನ ಸಮಾಧಾನದ ಒಡಂಬಡಿಕೆಯು ನಿನ್ನನ್ನು ಬಿಟ್ಟು ಕದಲದು,” ಎಂದು ನಿನ್ನನ್ನು ಕರುಣಿಸುವ ಯೆಹೋವ ದೇವರು ಹೇಳುತ್ತಾರೆ.</verse>
				<verse number="11">ಸಂಕಟಕ್ಕೊಳಗಾದವಳೇ! ಬಿರುಗಾಳಿಯಿಂದ ಬಡಿಯಲಾಗಿ ಆದರಣೆ ಹೊಂದದವಳೇ, ನಾನು ನಿನ್ನ ಕಲ್ಲುಗಳನ್ನು ಸುಂದರವಾದ ಬಣ್ಣಗಳೊಂದಿಗೆ ಇಟ್ಟು, ನಿನ್ನ ಅಸ್ತಿವಾರವನ್ನು ನೀಲಮಣಿಗಳಿಂದ ಹಾಕಿ ಗಾರೆಯಿಂದ ಕಟ್ಟುವೆನು.</verse>
				<verse number="12">ನಿನ್ನ ಕಿಟಕಿಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ ಮತ್ತು ನಿನ್ನ ಮೇರೆಗಳನ್ನು ಮನೋಹರವಾದ ರತ್ನಗಳಿಂದ ನಾನು ಮಾಡುವೆನು.</verse>
				<verse number="13">ನಿನ್ನ ಮಕ್ಕಳೆಲ್ಲಾ ಯೆಹೋವ ದೇವರಿಂದಲೇ ಬೋಧನೆ ಪಡೆಯುವರು. ನಿನ್ನ ಮಕ್ಕಳ ಸಮಾಧಾನವು ಅಧಿಕವಾಗಿರುವುದು.</verse>
				<verse number="14">ನೀನು ನೀತಿಯಲ್ಲಿ ನೆಲೆಗೊಂಡಿರುವೆ. ಬಾಧೆಯಿಂದ ದೂರವಾಗಿರುವೆ. ನೀನು ಭೀತಿಯಿಂದ ಭಯಪಡುವುದಿಲ್ಲ, ಏಕೆಂದರೆ ಅದು ನಿನ್ನ ಸಮೀಪಕ್ಕೆ ಬಾರದು.</verse>
				<verse number="15">ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ, ಅದು ನನ್ನ ಅಪ್ಪಣೆಯಿಂದ ಅಲ್ಲ; ಯಾರು ನಿನ್ನ ಮೇಲೆ ದಾಳಿಮಾಡುತ್ತಾರೋ, ಅವರು ನಿನಗೆ ಅಧೀನವಾಗುವರು.</verse>
				<verse number="16">“ಬೆಂಕಿಯಲ್ಲಿ ಕೆಂಡವನ್ನು ಊದುತ್ತಾ, ತನ್ನ ಕೆಲಸಕ್ಕೆ ಆಯುಧಗಳನ್ನು ತರುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ. ನಾಶಮಾಡುವ ಕೆಡುಕನನ್ನು ಸೃಷ್ಟಿಸಿದವನೂ ನಾನೇ.</verse>
				<verse number="17">ನಿನಗೆ ವಿರೋಧವಾಗಿ ನಿರ್ಮಿಸಿದ ಆಯುಧಗಳು ಸಫಲವಾಗುವುದಿಲ್ಲ. ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯತೀರ್ಪಿನಲ್ಲಿ ನೀನು ಖಂಡಿಸುವೆ. ಇದೇ ಯೆಹೋವ ದೇವರ ಸೇವಕರ ಬಾಧ್ಯತೆಯು, ಇದು ನನ್ನಿಂದ ಅವರಿಗೆ ದೊರೆಯುವ ಸಮರ್ಥನೆ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
			</chapter>
			<chapter number="55">
				<verse number="1">ಬಾಯಾರಿದ ಸಕಲ ಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನೂ ಬರಲಿ. ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ. ಬನ್ನಿರಿ, ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡುಕೊಳ್ಳಿರಿ.</verse>
				<verse number="2">ಆಹಾರವಲ್ಲದಕ್ಕೆ ಹಣವನ್ನು ವ್ಯರ್ಥ ಮಾಡುವುದು ಏಕೆ? ತೃಪ್ತಿಪಡಿಸದವುಗಳಿಗೆ ನಿಮ್ಮ ದುಡಿತವನ್ನು ವೆಚ್ಚಮಾಡುವುದು ಏಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯದನ್ನು ನೀವು ಉಣ್ಣಿರಿ. ನೀವು ಮೃಷ್ಟಾನ್ನದಲ್ಲಿ ಆನಂದಿಸಿ!</verse>
				<verse number="3">ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ, ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.</verse>
				<verse number="4">ನಾನು ಅವನನ್ನು ಜನರಿಗೆ ಸಾಕ್ಷಿಯನ್ನಾಗಿಯೂ, ಜನರಿಗೆ ನಾಯಕನನ್ನಾಗಿಯೂ, ಅಧಿಪತಿಯನ್ನಾಗಿಯೂ ಕೊಟ್ಟೆನು.</verse>
				<verse number="5">ನಿನ್ನ ದೇವರಾದ ಯೆಹೋವ ದೇವರ ನಿಮಿತ್ತವೂ, ಇಸ್ರಾಯೇಲಿನ ಪರಿಶುದ್ಧನ ನಿಮಿತ್ತವೂ ನೀನು ತಿಳಿಯದ ಜನಾಂಗಗಳನ್ನು ಕರೆಯುವೆ, ಏಕೆಂದರೆ ಆತನು ನಿನಗೆ ಕೊಟ್ಟ ವೈಭವದಿಂದ ನಿನ್ನನ್ನು ತಿಳಿಯದ ಜನಾಂಗಗಳು ನಿನ್ನ ಬಳಿಗೆ ಓಡಿ ಬರುವುವು.</verse>
				<verse number="6">ಯೆಹೋವ ದೇವರು ಸಿಕ್ಕುವ ಕಾಲದಲ್ಲಿ ಆತನನ್ನು ಹುಡುಕಿರಿ, ಆತನು ಸಮೀಪದಲ್ಲಿರುವಾಗ, ಆತನಿಗೆ ಬಿನ್ನಹ ಮಾಡಿರಿ.</verse>
				<verse number="7">ದುಷ್ಟನು ತನ್ನ ದುರ್ಮಾರ್ಗವನ್ನೂ, ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು, ಯೆಹೋವ ದೇವರ ಕಡೆಗೆ ಹಿಂದಿರುಗಲಿ. ಅವರು ಅವರ ಮೇಲೆ ಕರುಣೆ ಇಡುವರು. ನಮ್ಮ ದೇವರ ಬಳಿಗೂ ಹಿಂದಿರುಗಲಿ. ಏಕೆಂದರೆ ಅವರು ಹೇರಳವಾಗಿ ಕ್ಷಮಿಸುವರು.</verse>
				<verse number="8">ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ. ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ, ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="9">ಆಕಾಶವು ಭೂಮಿಯ ಮೇಲೆ ಎಷ್ಟು ಉನ್ನತವೋ, ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಿಗಿಂತಲೂ, ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತಲೂ ಅಷ್ಟು ಉನ್ನತವಾಗಿವೆ.</verse>
				<verse number="10">ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸಿರುಗೊಳಿಸಿ, ಫಲಿಸುವಂತೆ ಮಾಡಿ, ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ, ಹಾಗೆಯೇ</verse>
				<verse number="11">ನನ್ನ ಬಾಯಿಂದ ಹೊರಟ ಮಾತು ನನ್ನ ಇಷ್ಟಾರ್ಥವನ್ನು ನೆರವೇರಿಸಿ, ನಾನು ಉದ್ದೇಶಿಸಿದ್ದನ್ನು ಕೈಗೂಡಿಸದ ಹೊರತು ನನ್ನ ಕಡೆಗೆ ವ್ಯರ್ಥವಾಗಿ ಹಿಂದಿರುಗುವುದಿಲ್ಲ.</verse>
				<verse number="12">ಏಕೆಂದರೆ ನೀವು ಆನಂದದೊಡನೆ ಹೋಗುವಿರಿ, ಸಮಾಧಾನದಿಂದ ಬರುವಿರಿ. ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವುವು.</verse>
				<verse number="13">ಮುಳ್ಳಿಗೆ ಬದಲಾಗಿ ತುರಾಯಿ ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವುವು. ಇದು ಯೆಹೋವ ದೇವರ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವುದು.</verse>
			</chapter>
			<chapter number="56">
				<verse number="1">ಯೆಹೋವ ದೇವರು ಹೇಳುವುದೇನೆಂದರೆ: “ನ್ಯಾಯವನ್ನು ಕೈಗೊಳ್ಳಿರಿ, ನೀತಿಯಲ್ಲಿ ನಡೆಯಿರಿ. ಏಕೆಂದರೆ ನನ್ನ ರಕ್ಷಣೆಯು ಬರುವುದಕ್ಕೂ, ನನ್ನ ನೀತಿಯು ಪ್ರಕಟವಾಗುವುದಕ್ಕೂ ಸಮೀಪವಾಗಿದೆ.</verse>
				<verse number="2">ಇದನ್ನು ಮಾಡುವ ಮನುಷ್ಯನೂ, ಇದನ್ನು ಹಿಡಿದುಕೊಳ್ಳುವವರ ಪುತ್ರನೂ ಎಂದರೆ ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಗೊಳ್ಳುವವನೂ ಮತ್ತು ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು.”</verse>
				<verse number="3">ಯೆಹೋವ ದೇವರನ್ನು ಸೇರಿಕೊಂಡ ವಿದೇಶೀಯನು, “ಯೆಹೋವ ದೇವರು ತಮ್ಮ ಜನರಿಂದ ನನ್ನನ್ನು ಖಂಡಿತವಾಗಿ ಬಹಿಷ್ಕರಿಸುವರು,” ಎಂದು ಹೇಳದಿರಲಿ. ಮತ್ತು ನಪುಂಸಕನು, “ನಾನು ಕೇವಲ ಒಣಗಿದ ಮರ,” ಎಂದು ಹೇಳದಿರಲಿ.</verse>
				<verse number="4">ಯೆಹೋವ ದೇವರು ಹೇಳುವುದೇನೆಂದರೆ, “ನನ್ನ ಸಬ್ಬತ್ ದಿನವನ್ನು ಕೈಗೊಂಡು, ನನಗೆ ಮೆಚ್ಚಿಗೆಯಾದದ್ದನ್ನು ಆಯ್ದುಕೊಂಡು, ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವ ನಪುಂಸಕರಿಗೆ,</verse>
				<verse number="5">ನನ್ನ ಆಲಯದಲ್ಲಿಯೂ ಗೋಡೆಗಳ ಬಳಿಗೂ ಪುತ್ರ ಪುತ್ರಿಯರಿಗಿಂತ ಉತ್ತಮವಾದ ಸ್ಥಳವನ್ನೂ, ಹೆಸರನ್ನೂ ನಾನು ಕೊಡುತ್ತೇನೆ. ನಾನು ಅವರಿಗೆ ಎಂದಿಗೂ ಅಳಿಯದ ಶಾಶ್ವತವಾದ ಹೆಸರನ್ನು ಕೊಡುವೆನು.</verse>
				<verse number="6">ಯೆಹೋವ ದೇವರಾದ ನನ್ನನ್ನು ಸೇವಿಸುವುದಕ್ಕೂ, ನನ್ನ ಹೆಸರನ್ನು ಪ್ರೀತಿಸಿ, ನನಗೆ ಸೇವಕರಾಗಿರಲು ತಾವಾಗಿ ಯೆಹೋವ ದೇವರೊಂದಿಗೆ ಸೇರಿಕೊಂಡಿರುವ ವಿದೇಶಿಯರು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ, ಅದನ್ನು ಕೈಗೊಂಡು, ನನ್ನ ಒಡಂಬಡಿಕೆಯನ್ನು ಭದ್ರವಾಗಿ ಪಾಲಿಸುವವರನ್ನು</verse>
				<verse number="7">ನನ್ನ ಪರಿಶುದ್ಧ ಪರ್ವತಕ್ಕೆ ತರುವೆನು; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವನ್ನು ಉಂಟುಮಾಡುವೆನು. ನನ್ನ ಬಲಿಪೀಠದ ಮೇಲೆ ಅವರು ಅರ್ಪಿಸುವ ದಹನಬಲಿಗಳು, ಯಜ್ಞಗಳು ನನಗೆ ಒಪ್ಪಿಗೆಯಾಗುವುವು, ಏಕೆಂದರೆ ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯವು ಎಂದು ಎನಿಸಿಕೊಳ್ಳುವುದು.”</verse>
				<verse number="8">ಇಸ್ರಾಯೇಲಿನ ಸೆರೆಹೋದ ಜನರನ್ನು ಕೂಡಿಸುವಂಥ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: “ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು.”</verse>
				<verse number="9">ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವುದಕ್ಕೆ ಬನ್ನಿರಿ.</verse>
				<verse number="10">ಇಸ್ರಾಯೇಲಿನ ಕಾವಲುಗಾರರು ಕುರುಡರು. ಅವರೆಲ್ಲರೂ ಅರಿವಿಲ್ಲದವರು. ಅವರೆಲ್ಲರೂ ಮೂಕ ನಾಯಿಗಳು, ಅವು ಬೊಗಳಲಾರವು, ಕನಸು ಕಾಣುತ್ತವೆ, ಬಿದ್ದುಕೊಂಡಿರುತ್ತವೆ. ನಿದ್ರೆಯನ್ನು ಪ್ರೀತಿಸುತ್ತವೆ.</verse>
				<verse number="11">ಹೌದು, ಎಂದಿಗೂ ಸಾಕೆನ್ನದ ಹೊಟ್ಟೆಬಾಕ ನಾಯಿಗಳು ಮತ್ತು ಅವರು ಗ್ರಹಿಕೆ ಇಲ್ಲದ ಕುರುಬರು, ಅವರೆಲ್ಲರೂ ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ, ಪ್ರತಿಯೊಬ್ಬನೂ ತನ್ನ ಲಾಭ ಸಿಕ್ಕುವ ಕಡೆಗೂ ತಿರುಗಿಕೊಳ್ಳುವನು.</verse>
				<verse number="12">“ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು. ನಮ್ಮನ್ನು ನಾವೇ ಬೇಕಾದಷ್ಟು ಮದ್ಯದಿಂದ ತುಂಬಿಕೊಳ್ಳುವ! ನಾಳೆಯು ಈ ದಿವಸದಂತೆಯೇ ಇರುವುದು. ಅಥವಾ ಇದಕ್ಕಿಂತಲೂ ಚೆನ್ನಾಗಿರುವುದು,” ಎಂದು ಪ್ರತಿಯೊಬ್ಬನೂ ಹೇಳುತ್ತಾನೆ.</verse>
			</chapter>
			<chapter number="57">
				<verse number="1">ನೀತಿವಂತನು ನಾಶವಾಗುವನು ಆದರೆ ಯಾರೂ ಮನಸ್ಸಿಗೆ ಹಚ್ಚಿಕೊಳ್ಳುವುದಿಲ್ಲ. ಭಕ್ತಿಯುಳ್ಳ ಮನುಷ್ಯರು ಕಣ್ಮರೆಯಾಗುವರು. ನೀತಿವಂತನು ಮುಂದೆ ಬರುವ ಕೇಡಿನಿಂದ ಪಾರಾದರು ಎಂಬುದನ್ನು ಯಾರೂ ಯೋಚಿಸರು.</verse>
				<verse number="2">ಅವರು ಸಮಾಧಾನಕ್ಕೆ ಪ್ರವೇಶಿಸುತ್ತಾರೆ. ಅವರಲ್ಲಿ ನೆಟ್ಟಗೆ ನಡೆಯುವ ಪ್ರತಿಯೊಬ್ಬರೂ ತಮ್ಮ ಮರಣದ ಹಾಸಿಗೆಗಳಲ್ಲಿ ವಿಶ್ರಮಿಸಿಕೊಳ್ಳುತ್ತಾರೆ.</verse>
				<verse number="3">“ಆದರೆ ನೀವು ಮಾಟಗಾತಿಯ ಮಕ್ಕಳೇ, ವೇಶ್ಯೆ ಮತ್ತು ವ್ಯಭಿಚಾರಿಗಳ ಸಂತಾನದವರೇ, ಇಲ್ಲಿಗೆ ಬನ್ನಿರಿ.</verse>
				<verse number="4">ಯಾರನ್ನು ಹಾಸ್ಯಮಾಡುತ್ತೀರಿ? ಯಾರ ವಿಷಯವಾಗಿ ನೀವು ಬಾಯಿ ಅಗಲಿಸಿ, ನಾಲಿಗೆಯನ್ನು ಚಾಚುತ್ತೀರಿ?</verse>
				<verse number="5">ಹಸಿರಾದ ಏಲಾ ಮರಗಳ ಕೆಳಗೆ ವಿಗ್ರಹಗಳಿಂದ ಮದವೇರಿಸಿಕೊಂಡು, ಹಳ್ಳಗಳಲ್ಲಿ ಬಂಡೆಗಳ ಬಿರುಕುಗಳಲ್ಲಿ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಮಕ್ಕಳೂ, ಸುಳ್ಳಿನ ಸಂತತಿಯೂ ಅಲ್ಲವೋ?</verse>
				<verse number="6">ಹಳ್ಳದ ನುಣುಪಾದ ಕಲ್ಲುಗಳು ನಿಮ್ಮ ಪಾಲು. ಅವುಗಳೇ ಹೌದು, ಅವೇ ನಿನ್ನ ಪಾಲು. ಅವುಗಳಿಗೆ ನೀನು ಪಾನದ್ರವ್ಯವನ್ನು ಮತ್ತು ಧಾನ್ಯ ಸಮರ್ಪಣೆಯನ್ನು ಅರ್ಪಿಸಿದ್ದೀಯೆ. ನಾನು ಇದನ್ನೆಲ್ಲಾ ಕಂಡು ನನ್ನ ಕೋಪವನ್ನು ಅಡಗಿಸಿಕೊಳ್ಳಲು ಆಗುವುದೇ?</verse>
				<verse number="7">ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀಯೆ, ಬಲಿಯನ್ನರ್ಪಿಸಲು ಆ ಬೆಟ್ಟವನ್ನೇರಿದ್ದೀ.</verse>
				<verse number="8">ಕದಗಳ ಮತ್ತು ನಿಲುವಿನ ಹಿಂಭಾಗದಲ್ಲಿ ನಿನ್ನ ಜ್ಞಾಪಕದ ಚಿಹ್ನೆಯನ್ನು ಇಟ್ಟಿದ್ದೀಯೆ. ಏಕೆಂದರೆ ನನ್ನನ್ನು ಬಿಟ್ಟು ಬೇರೊಬ್ಬನಿಗೆ ನಿನ್ನನ್ನು ತೋರ್ಪಡಿಸಿಕೊಂಡಿದ್ದೀ. ಏರಿಹೋಗಿ ನಿನ್ನ ಮಂಚವನ್ನು ಅಗಲಮಾಡಿಕೊಂಡು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದೀ. ಅವರ ಮಂಚವನ್ನು ಕಂಡಲ್ಲಿ ಅದನ್ನು ಪ್ರೀತಿ ಮಾಡಿದ್ದೀಯೆ.</verse>
				<verse number="9">ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲದೊಂದಿಗೆ ರಾಜನ ಬಳಿಗೆ ಹೋಗಿದ್ದೀ. ದೂರಕ್ಕೆ ನಿನ್ನ ರಾಯಭಾರಿಗಳನ್ನು ಕಳುಹಿಸಿದ್ದೀ. ಪಾತಾಳದಷ್ಟು ನೀಚಸ್ಥಿತಿಗೆ ಇಳಿದಿದ್ದೀಯೆ.</verse>
				<verse number="10">ನಿನ್ನ ಮಾರ್ಗದಲ್ಲಿ ಬಹಳವಾಗಿ ದಣಿದಿದ್ದರೂ, ‘ಏನೂ ಪ್ರಯೋಜನವಿಲ್ಲ,’ ಎಂದುಕೊಳ್ಳಲಿಲ್ಲ. ನೀನು ಹೊಸ ಬಲವನ್ನು ತಂದುಕೊಂಡು, ಬೇಸರಗೊಳ್ಳದೆ ಮುಂದುವರೆದಿರುವೆ.</verse>
				<verse number="11">“ನೀನು ಯಾರಿಗೆ ಹೆದರಿ, ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸ ಮಾಡಿರುವೆ. ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ, ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?</verse>
				<verse number="12">ನಾನೇ ನಿನ್ನ ನೀತಿಯನ್ನೂ, ನಿನ್ನ ಕ್ರಿಯೆಗಳನ್ನೂ ತಿಳಿಯ ಮಾಡುವೆನು. ಏಕೆಂದರೆ ಅವು ನಿನಗೆ ಪ್ರಯೋಜನವಾಗುವುದಿಲ್ಲ.</verse>
				<verse number="13">ನೀನು ಸಹಾಯಕ್ಕಾಗಿ ಕೂಗುವಾಗ ನಿನ್ನ ವಿಗ್ರಹಗಳು ನಿನ್ನನ್ನು ರಕ್ಷಿಸಲಿ. ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವುದು. ವ್ಯರ್ಥವಾದದ್ದು ಅವುಗಳನ್ನು ತೆಗೆದುಕೊಂಡು ಹೋಗುವುದು. ಆದರೆ ನನ್ನಲ್ಲಿ ಆಶ್ರಯಿಸುವವನು, ದೇಶವನ್ನು ವಶಮಾಡಿಕೊಂಡು, ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.”</verse>
				<verse number="14">ನಂತರ ಹೀಗೆ ಹೇಳಲಾಗುವುದು: ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ, ನನ್ನ ಜನರ ದಾರಿಯೊಳಗಿಂದ ಆತಂಕವನ್ನು ಎತ್ತಿ ಹಾಕಿರಿ,</verse>
				<verse number="15">ಏಕೆಂದರೆ ಉನ್ನತನೂ, ಮಹೋನ್ನತನೂ, ನಿತ್ಯವಾಗಿ ವಾಸಿಸುವವನೂ, ಪರಿಶುದ್ಧನು ಎಂಬ ಹೆಸರುಳ್ಳಾತನೂ ಹೇಳುವುದೇನೆಂದರೆ: “ಉನ್ನತವಾದ ಪರಿಶುದ್ಧ ಸ್ಥಳದಲ್ಲಿ ವಾಸಿಸುವ ನಾನಾದರೂ, ಪಶ್ಚಾತ್ತಾಪ ಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪ ಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.</verse>
				<verse number="16">ನಾನು ಎಂದೆಂದಿಗೂ ವ್ಯಾಜ್ಯವಾಡುವುದಿಲ್ಲ. ಯಾವಾಗಲೂ ಕೋಪಿಸಿಕೊಳ್ಳೆನು. ಏಕೆಂದರೆ ಆತ್ಮವೂ, ನಾನು ಉಂಟುಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.</verse>
				<verse number="17">ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪಗೊಂಡು, ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾದೆನು. ಅವನು ಮೊಂಡುತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ.</verse>
				<verse number="18">ನಾನು ಅವನ ಮಾರ್ಗವನ್ನು ನೋಡಿದ್ದೇನೆ. ಅವನನ್ನು ಸ್ವಸ್ಥಮಾಡಿ, ಅವನನ್ನು ನಡೆಸುತ್ತೇನೆ. ಅವನಿಗೂ, ಅವನ ದುಃಖಿತರಿಗೂ ಆದರಣೆಗಳನ್ನು ಪುನಃಸ್ಥಾಪಿಸುವೆನು.</verse>
				<verse number="19">ನಾನು ತುಟಿಗಳಿಗೆ ಸ್ತೋತ್ರವನ್ನು ಉಂಟುಮಾಡುವೆನು; ದೂರವಾದವನಿಗೂ ಸಮೀಪವಾದವನಿಗೂ ಸಮಾಧಾನವಿರಲಿ, ಸಮಾಧಾನವಿರಲಿ. ನಾನು ಅವರನ್ನು ಸ್ವಸ್ಥ ಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="20">ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ, ಮೈಲಿಗೆಯನ್ನೂ ಕಾರುವಂಥ ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿದ್ದಾರೆ.</verse>
				<verse number="21">“ದುಷ್ಟರಿಗೆ ಸಮಾಧಾನವೇ ಇಲ್ಲ,” ಎಂದು ನನ್ನ ದೇವರು ಹೇಳುತ್ತಾರೆ.</verse>
			</chapter>
			<chapter number="58">
				<verse number="1">“ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು. ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನು ಘೋಷಿಸು.</verse>
				<verse number="2">ಆದರೂ ಅವರು ನನ್ನನ್ನು ಪ್ರತಿನಿತ್ಯವೂ ಹುಡುಕುತ್ತಾರೆ. ನನ್ನ ಮಾರ್ಗಗಳನ್ನು ತಿಳಿದುಕೊಳ್ಳುವುದರಲ್ಲಿ ಸಂತೋಷಪಡುತ್ತಾರೆ. ತನ್ನ ದೇವರ ಆಜ್ಞೆಗಳನ್ನು ಬಿಡದೆ, ನೀತಿಯನ್ನಾಚರಿಸುವ ಜನಾಂಗದ ಹಾಗೆಯೇ, ನೀತಿಯುಳ್ಳ ನ್ಯಾಯಗಳನ್ನು ನನ್ನಿಂದ ಕೇಳುತ್ತಾರೆ. ದೇವರನ್ನು ಸಮೀಪಿಸುವುದರಲ್ಲಿ ಸಂತೋಷಿಸುತ್ತಾರೆ.</verse>
				<verse number="3">‘ನಾವು ಉಪವಾಸ ಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸಲಿಲ್ಲ?’ ‘ನಮ್ಮ ಪ್ರಾಣವನ್ನು ಕುಂದಿಸಿಕೊಂಡಿದ್ದೇವೆ, ನೀನು ಗಮನಿಸದಿರುವುದೇಕೆ?’ ಎಂದು ಅವರು ಅಂದುಕೊಳ್ಳುತ್ತಾರೆ. “ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ಇಷ್ಟದ ಕೆಲಸವನ್ನು ನಡೆಸಿ ಮತ್ತು ನಿಮ್ಮ ಕೆಲಸದವರನ್ನು ದುಡಿತಕ್ಕೆ ಎಳೆಯುತ್ತೀರಿ.</verse>
				<verse number="4">ನಿಮ್ಮ ಉಪವಾಸದ ಪರಿಣಾಮಗಳು ಇಷ್ಟೆ: ವ್ಯಾಜ್ಯ, ಕಲಹ, ಹೊಡೆದಾಟ. ಇಲ್ಲಿಯವರೆಗೆ ನೀವು ಮಾಡಿದಂತೆ ಉಪವಾಸ ಮಾಡಿದರೆ, ನಿಮ್ಮ ಪ್ರಾರ್ಥನೆ ಪರಲೋಕವನ್ನು ಮುಟ್ಟುವುದಿಲ್ಲ.</verse>
				<verse number="5">ನಾನು ಆಯ್ದುಕೊಂಡದ್ದು ಇಂಥಾ ಉಪವಾಸವೋ? ಒಬ್ಬನು ಜೊಂಡಿನಂತೆ ತಲೆಯನ್ನು ಬಗ್ಗಿಸಿಕೊಳ್ಳುವುದು, ಗೋಣಿತಟ್ಟನ್ನು ಉಟ್ಟುಕೊಳ್ಳುವುದು, ಬೂದಿಯ ಗುಂಡಿಯಲ್ಲಿ ಕುಳಿತುಕೊಳ್ಳುವುದು, ಇವು ಯೆಹೋವ ದೇವರಿಗೆ ಮೆಚ್ಚಿಗೆಯಾಗುವ ಉಪವಾಸ ಎನ್ನುತ್ತೀರೋ?</verse>
				<verse number="6">“ನಾನು ಆಯ್ದುಕೊಳ್ಳುವ ಉಪವಾಸವು ಅನ್ಯಾಯದ ಸರಪಣಿಯನ್ನು ಬಿಚ್ಚುವುದೂ, ಭಾರವಾದ ಹೊರೆಯನ್ನು ಬಿಚ್ಚುವುದೂ, ದಬ್ಬಾಳಿಕೆಯಾದವರನ್ನು ಬಿಡಿಸುವುದೂ, ನೊಗಗಳನ್ನೆಲ್ಲಾ ಮುರಿದುಹಾಕುವುದೂ, ಇವೇ ಅಲ್ಲವೋ?</verse>
				<verse number="7">ಹಸಿದವರಿಗೆ ಅನ್ನ ಕೊಡುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬಟ್ಟೆಯಿಲ್ಲದವರನ್ನು ಕಂಡಾಗ ಅವರಿಗೆ ಬಟ್ಟೆ ಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೇ ನನಗೆ ಇಷ್ಟಕರವಾದ ಉಪವಾಸ ವ್ರತ?</verse>
				<verse number="8">ಆಗ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವುದು. ನಿನ್ನ ಆರೋಗ್ಯ ತ್ವರಿತವಾಗಿ ಕಾಣಿಸಿಕೊಳ್ಳುತ್ತದೆ. ನಿನ್ನ ನೀತಿ ನಿನಗೆ ಮುಂಬಲವಾಗಿರುವುದು. ಯೆಹೋವ ದೇವರ ಮಹಿಮೆಯು ನಿನಗೆ ಹಿಂಬಲವಾಗಿರುವುದು.</verse>
				<verse number="9">ಆಗ ನೀನು ಕರೆದರೆ ಯೆಹೋವ ದೇವರು ಉತ್ತರಕೊಡುವರು. ನೀನು ಕೂಗುವೆ, ಆಗ ಅವರು, ‘ನಾನು ಇಲ್ಲಿ ಇದ್ದೇನೆ,’ ಅನ್ನುವರು. “ನೀನು ನಿನ್ನ ಮಧ್ಯದೊಳಗಿಂದ ದಬ್ಬಾಳಿಕೆಯ ನೊಗವನ್ನೂ, ಬೆರಳ ಸನ್ನೆಯನ್ನೂ, ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,</verse>
				<verse number="10">ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ದಬ್ಬಾಳಿಕೆಗೆ ಒಳಗಾದವನ ಪ್ರಾಣವನ್ನು ತೃಪ್ತಿಪಡಿಸಿದರೆ, ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವುದು. ನಿನ್ನ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.</verse>
				<verse number="11">ಯೆಹೋವ ದೇವರು ನಿನ್ನನ್ನು ನಿತ್ಯವೂ ನಡೆಸುತ್ತಾ, ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ, ನಿನ್ನ ಎಲುಬುಗಳನ್ನು ಬಲಪಡಿಸುವರು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಇರುವೆ. ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ</verse>
				<verse number="12">ಆಗ ನಿನ್ನವರು ಪುರಾತನ ಕಾಲದ ಹಾಳಾದ ಸ್ಥಳಗಳನ್ನು ಕಟ್ಟುವರು. ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳನ್ನು ನೀನು ಎಬ್ಬಿಸುವೆ. ಬಿದ್ದ ಗೋಡೆಯನ್ನು ಎಬ್ಬಿಸುವ ದೇಶ ಎಂದೂ, ನಿವಾಸಿಗಳಿಗಾಗಿ ನಡೆದಾಡಲು ಹಾದಿಗಳನ್ನು ಉಂಟುಮಾಡುವ ದೇಶ ಎಂದೂ ನಿನಗೆ ಬಿರುದು ಬರುವುದು.</verse>
				<verse number="13">“ನೀನು ಸಬ್ಬತ್ ದಿನದಲ್ಲಿ ನಿನ್ನ ಕಾಲನ್ನು ಹಿಂದೆಗೆದು, ನನ್ನ ಪರಿಶುದ್ಧ ದಿವಸದಲ್ಲಿ ನಿನ್ನ ಇಷ್ಟವನ್ನು ಮಾಡದೆ ಹೋದರೆ, ಸಬ್ಬತ್ ದಿನವನ್ನು ಆನಂದಕರವಾದದ್ದೆಂದೂ, ಯೆಹೋವ ದೇವರ ಪರಿಶುದ್ಧ ದಿವಸವನ್ನು ಘನವುಳ್ಳದ್ದೆಂದೂ ಕರೆದರೆ, ಸ್ವಂತ ಕೆಲಸಗಳನ್ನು ಮಾಡದೆ, ಸ್ವಂತ ಇಷ್ಟಗಳನ್ನು ಕಂಡುಕೊಳ್ಳದೆ, ಸ್ವಂತ ಮಾತುಗಳನ್ನು ಆಡದೆ, ಅದನ್ನು ಘನಪಡಿಸಿದರೆ,</verse>
				<verse number="14">ಆಗ ಯೆಹೋವ ದೇವರಲ್ಲಿ ಆನಂದಗೊಳ್ಳುವಿ. ಭೂಮಿಯ ಎತ್ತರವಾದ ಸ್ಥಳಗಳ ಮೇಲೆ ನಿನ್ನನ್ನು ಹತ್ತಿಸಿ, ನಿನ್ನ ತಂದೆಯಾದ ಯಾಕೋಬನ ಬಾಧ್ಯತೆಯನ್ನು ಅನುಭವಿಸುವಂತೆ ನಿನಗೆ ಮಾಡುವೆನು.” ಏಕೆಂದರೆ ಯೆಹೋವ ದೇವರ ಬಾಯಿ ಇದನ್ನು ನುಡಿದಿದೆ.</verse>
			</chapter>
			<chapter number="59">
				<verse number="1">ಯೆಹೋವ ದೇವರ ಕೈ ರಕ್ಷಿಸಲಾರದ ಹಾಗೆ ಮೋಟುಗೈಯಲ್ಲ. ಆತನ ಕಿವಿ ಕೇಳಲಾರದ ಹಾಗೆ ಮಂದವಾಗಿಲ್ಲ.</verse>
				<verse number="2">ನಿಮ್ಮ ಅಕ್ರಮಗಳೇ, ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿವೆ. ನಿಮ್ಮ ಪಾಪಗಳೇ, ಆತನು ಹೇಳಿದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಸಿವೆ.</verse>
				<verse number="3">ಏಕೆಂದರೆ ನಿಮ್ಮ ಕೈಗಳು ರಕ್ತದಿಂದಲೂ, ನಿಮ್ಮ ಬೆರಳುಗಳು ಅಕ್ರಮದಿಂದಲೂ ಮೈಲಿಗೆಯಾಗಿವೆ. ನಿಮ್ಮ ತುಟಿಗಳು ಸುಳ್ಳನ್ನು ಆಡುತ್ತವೆ. ನಿಮ್ಮ ನಾಲಿಗೆ ಅನ್ಯಾಯವನ್ನು ನುಡಿಯುತ್ತದೆ.</verse>
				<verse number="4">ನೀತಿಗೋಸ್ಕರ ಕರೆಯುವವನು ಯಾವನೂ ಇಲ್ಲ, ಸತ್ಯಕ್ಕೋಸ್ಕರ ನ್ಯಾಯ ವಿಚಾರಿಸುವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡುತ್ತಾರೆ. ಸುಳ್ಳನ್ನು ಮಾತನಾಡುತ್ತಾರೆ. ಕೇಡನ್ನು ಗರ್ಭಧರಿಸಿ, ಅಕ್ರಮವನ್ನು ಹೆರುತ್ತಾರೆ.</verse>
				<verse number="5">ಹಾವಿನಂತೆ ಮೊಟ್ಟೆಗಳನ್ನು ಮರಿಮಾಡುತ್ತಾರೆ. ಜೇಡರ ಹುಳದಂತೆ ಬಲೆಯನ್ನು ನೇಯುತ್ತಾರೆ. ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು. ಒಡೆದುಬಿಡುವವನಿಗೆ ವಿಷದ ಮರಿ ಹೊರಡುವುದು.</verse>
				<verse number="6">ಅವರ ನೂಲು ವಸ್ತ್ರಕ್ಕಾಗದು. ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದುಕೊಳ್ಳರು. ಅವರ ಕೆಲಸಗಳು ಅಕ್ರಮದ ಕೆಲಸಗಳೇ. ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಇವೆ.</verse>
				<verse number="7">ಅವರ ಕಾಲುಗಳು ಪಾಪಕ್ಕೆ ಓಡುತ್ತವೆ. ಅಪರಾಧವಿಲ್ಲದ ರಕ್ತವನ್ನು ಚೆಲ್ಲುವುದಕ್ಕೆ ತ್ವರೆ ಪಡುತ್ತವೆ. ಅವರ ಆಲೋಚನೆಗಳು ಅಧರ್ಮದ ಆಲೋಚನೆಗಳೇ. ನಷ್ಟವೂ ನಾಶವೂ ಅವರ ಮಾರ್ಗಗಳಲ್ಲಿವೆ.</verse>
				<verse number="8">ಸಮಾಧಾನದ ಮಾರ್ಗವನ್ನೇ ಅವರು ಅರಿಯರು. ಅವರ ದಾರಿಗಳಲ್ಲಿ ನ್ಯಾಯವಿಲ್ಲ. ತಮ್ಮ ಹಾದಿಗಳನ್ನು ವಕ್ರಮಾಡಿಕೊಂಡಿದ್ದಾರೆ. ಅವುಗಳಲ್ಲಿ ನಡೆಯುವವರೆಲ್ಲರೂ ಸಮಾಧಾನವನ್ನರಿಯರು.</verse>
				<verse number="9">ಆದಕಾರಣ ನ್ಯಾಯ ನಿರ್ಣಯವು ನಮಗೆ ದೂರವಾಗಿದೆ. ನೀತಿಯು ನಮ್ಮನ್ನು ತಲುಪುವುದಿಲ್ಲ, ಬೆಳಕನ್ನು ಎದುರು ನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ; ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲಿಯೇ ನಡೆಯುತ್ತೇವೆ.</verse>
				<verse number="10">ಕುರುಡರ ಹಾಗೆ ಗೋಡೆಯನ್ನು ತಡವರಿಸುತ್ತೇವೆ. ಕಣ್ಣಿಲ್ಲದವರ ಹಾಗೆ ಮುಟ್ಟಿ ನೋಡುತ್ತೇವೆ. ಮಧ್ಯಾಹ್ನದಲ್ಲಿ ರಾತ್ರಿಯಂತೆ ಎಡವುತ್ತೇವೆ. ಸತ್ತವರ ಹಾಗೆ ಹಾಳಾದ ಸ್ಥಳಗಳಲ್ಲಿ ಇದ್ದೇವೆ.</verse>
				<verse number="11">ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ. ನಾವು ಪಾರಿವಾಳಗಳಂತೆ ದುಃಖದಿಂದ ಕೊರಗುತ್ತೇವೆ. ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ. ಆದರೆ ಅದು ಸಿಕ್ಕದು, ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ.</verse>
				<verse number="12">ಏಕೆಂದರೆ, ನಮ್ಮ ದ್ರೋಹಗಳು ನಿನ್ನ ಮುಂದೆ ಬಹಳವಾಗಿವೆ. ನಮ್ಮ ಪಾಪಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ. ನಮ್ಮ ದ್ರೋಹಗಳು ನಮ್ಮ ಸಂಗಡ ಇವೆ. ನಮ್ಮ ಅಕ್ರಮಗಳನ್ನು ನಾವೇ ಬಲ್ಲೆವು.</verse>
				<verse number="13">ದ್ರೋಹಮಾಡಿದ್ದೇವೆ, ಯೆಹೋವ ದೇವರಿಗೆ ಸುಳ್ಳಾಡಿದ್ದೇವೆ. ನಮ್ಮ ದೇವರ ಕಡೆಯಿಂದ ಹಿಂದಿರುಗಿದ್ದೇವೆ. ಬಲಾತ್ಕಾರದ ತಿರುಗಿ ಬೀಳುವಿಕೆಯ ಕಾರ್ಯಗಳನ್ನು ಮಾತನಾಡಿದ್ದೇವೆ. ಸುಳ್ಳು ಮಾತುಗಳಿಂದ ಬಸುರಾಗಿ ಅವುಗಳನ್ನು ಹೃದಯದಿಂದ ನುಡಿದಿದ್ದೇವೆ.</verse>
				<verse number="14">ನಾವು ನ್ಯಾಯವನ್ನು ಸಹ ಹಿಂದಕ್ಕೆ ತಳ್ಳಿಬಿಟ್ಟಿದ್ದೇವೆ. ನೀತಿಯನ್ನು ದೂರದಲ್ಲಿ ನಿಲ್ಲಿಸಿಬಿಟ್ಟಿದ್ದೇವೆ. ಸತ್ಯವು ಬೀದಿಯಲ್ಲಿ ಎಡವುತ್ತದೆ. ಯಥಾರ್ಥತೆಗೆ ಪ್ರವೇಶಿಸ ಇಲ್ಲಾ. ಸತ್ಯವು ಬೀದಿಯಲ್ಲಿ ಎಡವುತ್ತದೆ. ಯಥಾರ್ಥತೆಯು ಪ್ರವೇಶಿಸಕೂಡದು.</verse>
				<verse number="15">ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಬೇಟೆಯಾಗುತ್ತಾನೆ. ಯೆಹೋವ ದೇವರು ಇದನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು.</verse>
				<verse number="16">ಮಧ್ಯಸ್ಥಿಕನು ಒಬ್ಬನೂ ಇಲ್ಲವೆಂದು ಕಂಡು ಸ್ಥಬ್ಧನಾದನು. ಆದ್ದರಿಂದ ಆತನ ಸ್ವಹಸ್ತವೇ ಆತನಿಗೆ ರಕ್ಷಣೆಯ ಸಾಧನವಾಯಿತು. ಆತನ ನೀತಿಯೇ ಆತನಿಗೆ ಆಧಾರವಾಯಿತು.</verse>
				<verse number="17">ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು, ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು. ಪ್ರತೀಕಾರದ ವಸ್ತ್ರಗಳನ್ನು ಹೊದಿಕೆಯಾಗಿ ಹೊದ್ದುಕೊಂಡು, ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು.</verse>
				<verse number="18">ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು. ತನ್ನ ವೈರಿಗಳಿಗೆ ಉರಿಯನ್ನೂ, ತನ್ನ ಶತ್ರುಗಳಿಗೆ ಪ್ರತಿಫಲವನ್ನೂ, ದ್ವೀಪಗಳಿಗೆ ಪ್ರತಿಫಲವನ್ನೂ ಸಲ್ಲಿಸುವನು.</verse>
				<verse number="19">ಆಗ ಪಶ್ಚಿಮದ ಕಡೆಯವರು ಯೆಹೋವ ದೇವರ ಹೆಸರಿಗೂ, ಸೂರ್ಯೋದಯದ ಕಡೆಯವರು ದೇವರ ಘನಕ್ಕೂ ಭಯಪಡುವರು. ವೈರಿಯು ಪ್ರಳಯದಂತೆ ಬರುವಾಗ, ಯೆಹೋವ ದೇವರ ಆತ್ಮವು ಅವನಿಗೆ ವಿರೋಧವಾಗಿ ಧ್ವಜವನ್ನೆತ್ತುವರು.</verse>
				<verse number="20">“ವಿಮೋಚಕನು ಚೀಯೋನಿಗೂ ಯಾಕೋಬಿನಲ್ಲಿ ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಡುವವರಿಗಾಗಿಯೂ ಬರುವನು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="21">ಮಾತ್ರವಲ್ಲದೆ, “ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ. ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ಮೇಲಿರುವ ನನ್ನ ಆತ್ಮನೂ, ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ, ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ, ನಿನ್ನ ಸಂತಾನದ ಬಾಯಿಂದಲೂ ತೊಲಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
			</chapter>
			<chapter number="60">
				<verse number="1">ಏಳು, ಪ್ರಕಾಶಿಸು. ಏಕೆಂದರೆ ನಿನ್ನ ಮೇಲೆ ಬೆಳಕು ಬಂತು, ಯೆಹೋವ ದೇವರ ಮಹಿಮೆಯು ನಿನ್ನ ಮೇಲೆ ಉದಯವಾಯಿತು.</verse>
				<verse number="2">ಇಗೋ, ಕತ್ತಲೆ ಭೂಮಿಯನ್ನೂ, ಗಾಢಾಂಧಕಾರವು ಜನರನ್ನೂ ಮುಚ್ಚುವುದು. ಆದರೆ ನಿನ್ನ ಮೇಲೆ ಯೆಹೋವ ದೇವರು ಉದಯಿಸುವರು. ಆತನ ಮಹಿಮೆಯು ನಿನ್ನ ಮೇಲೆ ಕಾಣಬರುವುದು.</verse>
				<verse number="3">ಇತರ ಜನಾಂಗಗಳು ನಿನ್ನ ಪ್ರಕಾಶಕ್ಕೂ, ಅರಸರು ನಿನ್ನ ಉದಯದ ಕಾಂತಿಗೂ ಬರುವರು.</verse>
				<verse number="4">ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು. ಅವರೆಲ್ಲರು ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ. ನಿನ್ನ ಪುತ್ರರು ದೂರದಿಂದ ಬರುವರು, ನಿನ್ನ ಪುತ್ರಿಯರು ಕಂಕುಳಿನಲ್ಲಿ ಕುಳಿತು ಬರುವರು.</verse>
				<verse number="5">ನೀನು ನೋಡಿ ಕಳೆಗೊಳ್ಳುವಿ, ನಿನ್ನ ಹೃದಯವು ಅದರುತ್ತಾ ಉಬ್ಬುವುದು, ಏಕೆಂದರೆ ಸಮುದ್ರದ ಸಮೃದ್ಧಿಯು ನಿನ್ನ ಕಡೆಗೆ ತಿರುಗಿಕೊಳ್ಳುವುದು. ಇತರ ಜನಾಂಗಗಳ ಆಸ್ತಿಯು ನಿನ್ನ ಬಳಿಗೆ ಬರುವುದು.</verse>
				<verse number="6">ಒಂಟೆಗಳ ಸಮೂಹವು ನಿನ್ನ ದೇಶದಲ್ಲಿ ತುಂಬಿಕೊಳ್ಳುವುದು. ಮಿದ್ಯಾನಿನ ಏಫಾದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೆಬದಿಂದಲೂ ಬರುವುವು. ಬಂಗಾರವನ್ನೂ, ಧೂಪವನ್ನೂ ತರುವುವು. ಯೆಹೋವ ದೇವರ ಸ್ತೋತ್ರಗಳನ್ನು ಸಾರುವುವು.</verse>
				<verse number="7">ಕೇದಾರಿನ ಮಂದೆಗಳೆಲ್ಲಾ ನಿನ್ನಲ್ಲಿ ಸೇರಿಬರುವುವು. ನೆಬಾಯೋತಿನ ಟಗರುಗಳು ನಿನ್ನನ್ನು ಸೇವಿಸುವುವು. ನನ್ನ ಬಲಿಪೀಠದ ಮೇಲೆ ಮೆಚ್ಚಿಕೆಯಿಂದ ಏರುವುವು. ನನ್ನ ಮಹಿಮೆಯ ಆಲಯವನ್ನು ಘನಪಡಿಸುವೆನು.</verse>
				<verse number="8">ಮೇಘದಂತೆಯೂ, ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು?</verse>
				<verse number="9">ನಿಶ್ಚಯವಾಗಿ ದ್ವೀಪಗಳು, ತಾರ್ಷೀಷಿನ ಹಡಗುಗಳು ಮೊದಲಾಗಿ ನನಗೋಸ್ಕರ ದೂರದಿಂದ ನಿನ್ನ ಪುತ್ರರನ್ನು ತಮ್ಮ ಬೆಳ್ಳಿಬಂಗಾರದ ಸಹಿತವಾಗಿ ನಿನ್ನ ದೇವರಾದ ಯೆಹೋವ ದೇವರ ಬಳಿಗೂ, ನಿನ್ನನ್ನು ವೈಭವದಿಂದ ಶೃಂಗರಿಸಿರುವ ಇಸ್ರಾಯೇಲಿನ ಪರಿಶುದ್ಧನ ಬಳಿಗೂ ತರುವುದರಲ್ಲಿ ಮುಂದಾಗುತ್ತಿವೆ.</verse>
				<verse number="10">ಇದಲ್ಲದೆ ವಿದೇಶಿಯರು ನಿನ್ನ ಗೋಡೆಗಳನ್ನು ಕಟ್ಟುವರು. ಅವರ ಅರಸರು ಸಹ ನಿನಗೆ ಸೇವೆಮಾಡುವರು. ಏಕೆಂದರೆ ನನ್ನ ಬೇಸರದಲ್ಲಿ ನಿನ್ನನ್ನು ಹೊಡೆದೆನು. ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.</verse>
				<verse number="11">ಆದ್ದರಿಂದ ನಿನ್ನ ಬಾಗಿಲುಗಳು ಯಾವಾಗಲೂ ತೆರೆದಿರುವುವು. ಇತರ ಜನಾಂಗಗಳ ಆಸ್ತಿ ನಿನ್ನ ಬಳಿಗೆ ತರುತ್ತಿರುವರು. ಅವರ ಅರಸರು ಸಹ ಬಂಧುಗಳಾಗಿ ನಿನ್ನ ಮೆರವಣಿಗೆಯಲ್ಲಿ ಮುನ್ನಡೆಸಿದರು ಹಗಲುರಾತ್ರಿ ಅವು ಮುಚ್ಚಿರುವುದಿಲ್ಲ.</verse>
				<verse number="12">ನಿನ್ನನ್ನು ಸೇವಿಸದ ಜನಾಂಗವೂ, ರಾಜ್ಯವೂ ನಾಶವಾಗುವುದು. ಆ ಜನಾಂಗಗಳು ಸಂಪೂರ್ಣವಾಗಿ ಹಾಳಾಗುವುವು.</verse>
				<verse number="13">ಲೆಬನೋನಿನ ವೈಭವವು ತುರಾಯಿ, ಅಗಸೆ, ಹೊನ್ನೆ ಮರಗಳು ಕೂಡ ನನ್ನ ಪರಿಶುದ್ಧ ಸ್ಥಳವನ್ನು ಶೃಂಗರಿಸುವುದಕ್ಕೆ ನಿನ್ನ ಬಳಿಗೆ ಬರುವುವು. ನನ್ನ ಪಾದಗಳ ಸ್ಥಳವನ್ನು ನಾನು ಗೌರವವುಳ್ಳದ್ದಾಗಿ ಮಾಡುವೆನು.</verse>
				<verse number="14">ಆಗ ನಿನ್ನನ್ನು ಕುಗ್ಗಿಸಿದವರು, ಬಗ್ಗಿಕೊಂಡು ನಿನ್ನ ಬಳಿಗೆ ಬರುವರು. ನಿನ್ನನ್ನು ಅಸಹ್ಯಿಸಿದವರೆಲ್ಲರೂ ನಿನ್ನ ಪಾದಗಳಿಗೆ ಅಡ್ಡಬಿದ್ದು, ನಿನ್ನನ್ನು ಯೆಹೋವ ದೇವರ ಪಟ್ಟಣವೆಂದೂ, ಇಸ್ರಾಯೇಲಿನ ಪರಿಶುದ್ಧನ ಚೀಯೋನೆಂದೂ ಕರೆಯುವರು.</verse>
				<verse number="15">ನಿನ್ನೊಳಗೆ ನಿವಾಸಿಗಳು ಬಿಟ್ಟುಬಿಟ್ಟ, ದ್ವೇಷಕ್ಕೀಡಾದ, ಯಾರೂ ಹಾದುಹೋಗದ ನಿನಗೆ ನಾನು ನಿತ್ಯ ಘನತೆಯನ್ನು ದಯಪಾಲಿಸಿ ನಿನ್ನನ್ನು ಎಲ್ಲಾ ಸಂತತಿಗಳಲ್ಲಿಯೂ ಉಲ್ಲಾಸವಾಗಿರುವಂತೆ ಮಾಡುವೆನು.</verse>
				<verse number="16">ಇತರ ಜನಾಂಗಗಳವರಿಂದ ಹಾಲನ್ನು ಕುಡಿಯುವೆ. ಅರಸರು ನಿನಗೆ ಹಾಲು ಕುಡಿಸುವರು. ಯೆಹೋವನಾದ ನಾನೇ ನಿನ್ನ ರಕ್ಷಕನೂ, ನಿನ್ನ ವಿಮೋಚಕನೂ, ಯಾಕೋಬಿನ ಪರಾಕ್ರಮಿಯೂ ಎಂದು ತಿಳಿದುಕೊಳ್ಳುವೆ.</verse>
				<verse number="17">ಕಂಚಿನ ಬದಲಾಗಿ ನಿನಗೆ ಬಂಗಾರವನ್ನು ತರುವೆನು. ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ, ಮರಕ್ಕೆ ಬದಲಾಗಿ ಕಂಚನ್ನೂ, ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು. ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ, ನೀತಿಯನ್ನು ನಿನಗೆ ಅಧಿಕಾರಿಯನ್ನಾಗಿ ಮಾಡುವೆನು.</verse>
				<verse number="18">ಬಲಾತ್ಕಾರವೂ, ನಿನ್ನ ದೇಶದೊಳಗೆ ಹಾಳಾದದ್ದೂ, ನಾಶವೂ, ನಿನ್ನ ಮೇರೆಗಳಲ್ಲಿ ಕೇಳಿಬರುವುದಿಲ್ಲ. ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ, ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿಡುವೆ.</verse>
				<verse number="19">ಇನ್ನು ಮೇಲೆ ಸೂರ್ಯನು ನಿನಗೆ ಹಗಲಿನಲ್ಲಿ ಬೆಳಕಾಗಿರುವುದಿಲ್ಲ. ಚಂದ್ರನು ಪ್ರಕಾಶಕ್ಕಾಗಿ ನಿನಗೆ ಬೆಳಕು ಕೊಡುವುದಿಲ್ಲ. ಆದರೆ ಯೆಹೋವ ದೇವರು ನಿನಗೆ ನಿತ್ಯವಾದ ಬೆಳಕಾಗಿರುವರು. ನಿನ್ನ ದೇವರು ನಿನ್ನ ಬೆಳಗುವ ತೇಜಸ್ಸಾಗಿರುವರು.</verse>
				<verse number="20">ನಿನ್ನ ಸೂರ್ಯನು ಅಸ್ತಮಿಸುವುದಿಲ್ಲ. ನಿನ್ನ ಚಂದ್ರನು ಕಾಣದೆ ಹೋಗುವುದಿಲ್ಲ. ಏಕೆಂದರೆ ಯೆಹೋವ ದೇವರು ನಿನಗೆ ನಿತ್ಯವಾದ ಬೆಳಕಾಗಿರುವರು. ನೀನು ದುಃಖಿಸುವ ದಿನಗಳು ಸಮಾಪ್ತಿಯಾಗುವುದು.</verse>
				<verse number="21">ನಿನ್ನ ಜನರೆಲ್ಲರೂ ನೀತಿವಂತರಾಗಿರುವರು. ದೇಶವನ್ನು ಸದಾಕಾಲಕ್ಕೆ ಸ್ವಾಧೀನಮಾಡಿಕೊಳ್ಳುವರು. ನಾನು ಮಹಿಮೆ ಹೊಂದುವುದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ, ನನ್ನ ಕೈ ಸೃಷ್ಟಿಯೂ ಆಗಿರುವರು.</verse>
				<verse number="22">ಕನಿಷ್ಠನು ಸಾವಿರವಾಗುವನು, ಅಲ್ಪನಿಂದ ಬಲವಾದ ಜನಾಂಗವಾಗುವುದು. ಯೆಹೋವನೆಂಬ ನಾನು ಕ್ಲುಪ್ತ ಕಾಲದಲ್ಲಿ ಇದನ್ನು ಬಹು ಬೇಗನೆ ಉಂಟುಮಾಡುವೆನು.</verse>
			</chapter>
			<chapter number="61">
				<verse number="1">ಸಾರ್ವಭೌಮ ಯೆಹೋವ ದೇವರ ಆತ್ಮರು ನನ್ನ ಮೇಲೆ ಇದ್ದಾರೆ. ಏಕೆಂದರೆ ಯೆಹೋವ ದೇವರು ನನ್ನನ್ನು ಬಡವರಿಗೆ ಶುಭಸಂದೇಶವನ್ನು ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಮುರಿದ ಹೃದಯಗಳನ್ನು ಕಟ್ಟುವುದಕ್ಕೂ, ಬಂಧಿತರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಮತ್ತು ಕೈದಿಗಳಿಗೆ ಕತ್ತಲೆಯಿಂದ ಬಿಡುಗಡೆ ಮಾಡಲು</verse>
				<verse number="2">ಯೆಹೋವ ದೇವರ ಮೆಚ್ಚುಗೆಯ ವರ್ಷವನ್ನು ಸಾರಿ ಹೇಳುವುದಕ್ಕೂ, ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧ ಮಾಡುವುದಕ್ಕೂ, ದುಃಖವುಳ್ಳವರೆಲ್ಲರನ್ನು ಆದರಿಸುವುದಕ್ಕೂ,</verse>
				<verse number="3">ಚೀಯೋನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯದ ಕಿರೀಟವನ್ನೂ, ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ, ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರ ಎಂಬ ಮೇಲಂಗಿಯನ್ನು ಕೊಡುವುದಕ್ಕೂ ನನ್ನನ್ನು ನೇಮಿಸಿದ್ದಾರೆ. ಆಗ ಅವರಿಗೆ ನೀತಿವೃಕ್ಷಗಳೆಂದೂ, ಯೆಹೋವ ದೇವರು ತಾನು ಮಹಿಮೆ ಹೊಂದುವುದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವುದು.</verse>
				<verse number="4">ಆಗ ಅವರು ಪೂರ್ವಕಾಲದ ಹಾಳು ಸ್ಥಳಗಳನ್ನು ಕಟ್ಟಿ, ಮುಂಚೆ ಹಾಳುಬಿದ್ದವುಗಳನ್ನು ಎಬ್ಬಿಸುವರು. ಅನೇಕ ತಲಾಂತರಗಳಿಂದ ಹಾಳಾದ ಪಟ್ಟಣಗಳನ್ನೂ, ನೂತನ ಪಡಿಸುವರು.</verse>
				<verse number="5">ಪರನಾಡಿನವರು ನಿಂತು ನಿಮ್ಮ ಮಂದೆಗಳನ್ನು ಮೇಯಿಸುವರು. ಇತರರು ನಿಮಗೆ ನೇಗಿಲು ಹೂಡುವವರೂ, ದ್ರಾಕ್ಷಿತೋಟ ಕಾಯುವವರೂ ಆಗಿರುವರು.</verse>
				<verse number="6">ಆದರೆ ನೀವು ಯೆಹೋವ ದೇವರ ಯಾಜಕರೆಂಬ ಬಿರುದನ್ನು ಹೊಂದುವಿರಿ. ನಮ್ಮ ದೇವರ ಸೇವಕರೆಂದು ನಿಮಗೆ ಹೆಸರಾಗುವುದು, ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ. ಅವರ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.</verse>
				<verse number="7">ನಿಮ್ಮ ನಾಚಿಕೆಗೆ ಬದಲಾಗಿ ಮಾನವು ಎರಡರಷ್ಟಾಗುವುದು. ಅವಮಾನಕ್ಕೆ ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು. ಆದ್ದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನಮಾಡಿಕೊಳ್ಳುವರು. ನಿತ್ಯವಾದ ಸಂತೋಷವು ನಿಮಗೆ ಆಗುವುದು.</verse>
				<verse number="8">ಏಕೆಂದರೆ ಯೆಹೋವನಾದ ನಾನು ನ್ಯಾಯವನ್ನು ಪ್ರೀತಿಮಾಡುತ್ತೇನೆ. ಸುಲಿಗೆಯನ್ನೂ ಅನ್ಯಾಯವನ್ನೂ ಹಗೆಮಾಡುತ್ತೇನೆ. ನನ್ನ ನಿಷ್ಠೆಯಲ್ಲಿ ನಾನು ನನ್ನ ಜನರಿಗೆ ಪ್ರತಿಫಲ ನೀಡುತ್ತೇನೆ ಮತ್ತು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.</verse>
				<verse number="9">ಆಗ ಅವರ ಸಂತಾನವು ಇತರ ಜನಾಂಗಗಳಲ್ಲಿ ಪ್ರಸಿದ್ಧವಾಗುವುದು. ಅವರಿಂದಾದ ಉತ್ಪತ್ತಿ ಜನರ ಮಧ್ಯದಲ್ಲಿ ತಿಳಿಸಲಾಗುವುದು. ಅವರನ್ನು ನೋಡುವವರೆಲ್ಲರೂ, ಅವರೇ ಯೆಹೋವ ದೇವರು ಆಶೀರ್ವದಿಸಿದ ಸಂತಾನ ಎಂದು ಒಪ್ಪಿಕೊಳ್ಳುವರು.</verse>
				<verse number="10">ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.</verse>
				<verse number="11">ಏಕೆಂದರೆ ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವುದೋ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳೆಯಿಸುವುದೋ, ಹಾಗೆಯೇ ಸಾರ್ವಭೌಮ ಯೆಹೋವ ದೇವರು ನೀತಿಯನ್ನೂ, ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವರು.</verse>
			</chapter>
			<chapter number="62">
				<verse number="1">ಚೀಯೋನಿಗೋಸ್ಕರ ನಾನು ಮೌನವಾಗಿರುವುದಿಲ್ಲ! ಯೆರೂಸಲೇಮಿಗೋಸ್ಕರ ಅದರ ವಿಮೋಚನೆಯು ಪ್ರಕಾಶದಂತೆಯೂ, ಅದರ ರಕ್ಷಣೆಯು ಉರಿಯುವ ದೀವಿಟಿಗೆಯಂತೆಯೂ ಹೊರಡುವವರೆಗೆ ನಾನು ವಿಶ್ರಾಂತಿಯಿಂದ ಇರುವುದಿಲ್ಲ.</verse>
				<verse number="2">ಆಗ ಇತರ ಜನಾಂಗಗಳು ನಿನ್ನ ವಿಮೋಚನೆಯನ್ನೂ, ಅರಸರೆಲ್ಲರು ನಿನ್ನ ಮಹಿಮೆಯನ್ನೂ ನೋಡುವರು. ಯೆಹೋವ ದೇವರ ಬಾಯಿ ನೇಮಿಸುವ ಹೊಸ ಹೆಸರು ನಿನಗೆ ದೊರೆಯುವುದು.</verse>
				<verse number="3">ಯೆಹೋವ ದೇವರ ಕೈಯಲ್ಲಿ ಮಹಿಮೆಯ ಕಿರೀಟವಾಗಿಯೂ, ನಿನ್ನ ದೇವರ ಅಂಗೈಯಲ್ಲಿ ರಾಜ ಮುಕುಟವಾಗಿಯೂ ಇರುವೆ.</verse>
				<verse number="4">ಇನ್ನು ಮೇಲೆ ನೀನು ಗಂಡಬಿಟ್ಟವಳೆಂದು ಎನಿಸಿಕೊಳ್ಳುವುದಿಲ್ಲ ನಿನ್ನ ದೇಶಕ್ಕೆ ಹಾಳಾದದ್ದು ಎಂಬ ಹೆಸರೂ ಇರುವುದಿಲ್ಲ. ಆದರೆ ನೀನು ಹೆಪ್ಸಿಬಾ ಎಂದೂ ನಿನ್ನ ದೇಶಕ್ಕೆ ಬ್ಯೂಲಾ ಎಂದೂ ಹೆಸರಾಗುವುದು. ಏಕೆಂದರೆ ಯೆಹೋವ ದೇವರು ನಿನ್ನನ್ನು ಮೆಚ್ಚುವರು, ನಿನ್ನ ದೇಶಕ್ಕೆ ವಿವಾಹವಾಗುವುದು.</verse>
				<verse number="5">ಯುವಕನು ಕನ್ಯೆ ಯುವತಿಯನ್ನು ವರಿಸುವಂತೆ, ನಿನ್ನ ಜನರು ದೇಶವನ್ನು ಸ್ವಾಧೀನಪಡಿಸಿಕೊಳ್ಳುವರು. ವರನು ವಧುವಿನ ಮೇಲೆ ಆನಂದ ಪಡುವ ಪ್ರಕಾರ, ನಿನ್ನ ದೇವರು ನಿನ್ನ ಮೇಲೆ ಆನಂದಿಸುವರು.</verse>
				<verse number="6">ಯೆರೂಸಲೇಮೇ, ನಿನ್ನ ಗೋಡೆಗಳ ಮೇಲೆ ಕಾವಲುಗಾರರನ್ನು ನೇಮಿಸಿದ್ದೇನೆ. ಅವರು ಹಗಲಿರುಳು ಮೌನವಾಗಿರುವುದೇ ಇಲ್ಲ. ಯೆಹೋವ ದೇವರಿಗೆ ಜ್ಞಾಪಕಪಡಿಸುವವರೇ, ನೀವೂ ಸುಮ್ಮನಿರಬೇಡಿರಿ.</verse>
				<verse number="7">ಯೆರೂಸಲೇಮನ್ನು ಸ್ಥಾಪಿಸಿ, ಲೋಕಪ್ರಸಿದ್ಧಿಗೆ ತರುವ ತನಕ ಆತನಿಗೂ ವಿಶ್ರಾಂತಿ ಕೊಡಬೇಡಿರಿ.</verse>
				<verse number="8">ಯೆಹೋವ ದೇವರು ತನ್ನ ಬಲಗೈಯಿಂದಲೂ, ತನ್ನ ಬಲವುಳ್ಳ ತೋಳಿನಿಂದಲೂ ಆಣೆಯಿಟ್ಟು ಹೇಳಿದ್ದೇನೆಂದರೆ: “ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವುದಿಲ್ಲ. ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ವಿದೇಶಿಯರು ಕುಡಿಯುವುದಿಲ್ಲ.</verse>
				<verse number="9">ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆ ಹಾಕಿದವರೇ, ಅದನ್ನು ಉಂಡು ಯೆಹೋವ ದೇವರನ್ನು ಸ್ತುತಿಸುವರು. ನಿನ್ನ ದ್ರಾಕ್ಷಿಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು.”</verse>
				<verse number="10">ಹಾದುಹೋಗಿರಿ, ಬಾಗಿಲುಗಳಲ್ಲಿ ಹಾದುಹೋಗಿರಿ, ಜನರಿಗೆ ದಾರಿಯನ್ನು ಸಿದ್ಧಮಾಡಿರಿ, ಎತ್ತರಿಸಿರಿ, ರಾಜಮಾರ್ಗವನ್ನು ಎತ್ತರಿಸಿ, ಕಲ್ಲುಗಳನ್ನು ಆಯ್ದು ಕೂಡಿಸಿರಿ. ಜನಾಂಗಗಳಿಗೋಸ್ಕರ ಧ್ವಜವನ್ನು ಎತ್ತಿರಿ.</verse>
				<verse number="11">ಇಗೋ, ಯೆಹೋವ ದೇವರು ಭೂಮಿಯ ಅಂತ್ಯದವರೆಗೆ ಹೀಗೆ ಘೋಷಣೆ ಮಾಡಿದ್ದಾರೆ: “ಚೀಯೋನಿನ ಪುತ್ರಿ ಇಗೋ, ‘ನಿನ್ನ ರಕ್ಷಣೆಯು ಬರುತ್ತದೆ. ಆತನ ಬಹುಮಾನವು ಆತನ ಸಂಗಡ, ಆತನ ಪ್ರತಿಫಲವು ಆತನ ಮುಂದೆಯೂ ಇದೆ ಎಂದು ಹೇಳಿರಿ.’ ”</verse>
				<verse number="12">ಆಗ ಅವರು, ಪರಿಶುದ್ಧ ಜನರೂ, ಯೆಹೋವ ದೇವರು ವಿಮೋಚಿಸಿದವರೂ ಎಂದು ಎನಿಸಿಕೊಳ್ಳುವರು ನಿನಗೆ ಹುಡುಕಿದ ಹಾಗೂ ಕೈ ಬಿಡದ ಪಟ್ಟಣ, ಎಂದು ಹೆಸರು ಬರುವುದು.</verse>
			</chapter>
			<chapter number="63">
				<verse number="1">ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರವನ್ನು ತೊಟ್ಟುಕೊಂಡವನಾಗಿ, ತನ್ನ ಮಹಾ ಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? “ನೀತಿಯನ್ನು ಘೋಷಿಸುವವನೂ, ರಕ್ಷಿಸಲು ಬಲಿಷ್ಠನೂ ನಾನೇ.”</verse>
				<verse number="2">ನಿನ್ನ ವಸ್ತ್ರಗಳು ಏಕೆ ಕೆಂಪಾದವು? ನಿನ್ನ ಬಟ್ಟೆಗಳು ಏಕೆ ದ್ರಾಕ್ಷಿಯನ್ನು ತುಳಿಯುವವನ ಹಾಗಿವೆ?</verse>
				<verse number="3">“ದ್ರಾಕ್ಷಿಯನ್ನು ತೊಟ್ಟಿಯಲ್ಲಿ ನಾನೊಬ್ಬನೇ ತುಳಿದಿದ್ದೇನೆ. ಜನಾಂಗಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ. ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ್ನ ಉರಿಯಲ್ಲಿ ಅವರನ್ನು ಜಜ್ಜಿದ್ದೇನೆ. ಆದ್ದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಸಿಡಿದು, ನನ್ನ ವಸ್ತ್ರಕ್ಕೆ ಮೆತ್ತಿಕೊಂಡಿದೆ;</verse>
				<verse number="4">ಏಕೆಂದರೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು ನನ್ನ ಹೃದಯದಲ್ಲಿದೆ. ನಾನು ವಿಮೋಚಿಸಿದವರ ವರುಷವು ಬಂತು.</verse>
				<verse number="5">ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಉದ್ಧಾರ ಮಾಡುವವನು ಇಲ್ಲದ್ದರಿಂದ ಆಶ್ಚರ್ಯಪಟ್ಟೆನು. ಆಗ ನನ್ನ ಸ್ವಂತ ಬಾಹುವು ನನಗೆ ರಕ್ಷಣೆಯನ್ನು ಉಂಟುಮಾಡಿತು. ನನ್ನ ಕೋಪವೇ ನನಗೆ ಆಧಾರವಾಯಿತು.</verse>
				<verse number="6">ನನ್ನ ಕೋಪದಲ್ಲಿ ಜನಾಂಗಗಳನ್ನು ತುಳಿದುಬಿಟ್ಟೆನು. ನನ್ನ ಉರಿಯಲ್ಲಿ ಅವರನ್ನು ಕುಡಿಯುವಂತೆ ಮಾಡಿದೆನು. ಅವರ ರಕ್ತವನ್ನು ಭೂಮಿಗೆ ಸುರಿಸಿದೆನು.”</verse>
				<verse number="7">ಯೆಹೋವ ದೇವರು ನಮಗೆ ಮಾಡಿದ್ದೆಲ್ಲದರ ಪ್ರಕಾರ, ಯೆಹೋವ ದೇವರ ಪ್ರೀತಿ ಕೃಪೆಗಳನ್ನೂ, ಯೆಹೋವ ದೇವರ ಕಾರ್ಯಗಳನ್ನು ಸ್ತೋತ್ರಗಳನ್ನೂ ಜ್ಞಾಪಕಪಡಿಸುವೆನು. ಆತನು ತನ್ನ ಅಂತಃಕರುಣೆಯ ಪ್ರಕಾರವೂ, ತನ್ನ ಕೃಪೆಯ ಮಹಾ ಒಳ್ಳೆಯತನದ ಪ್ರಕಾರವೂ, ಇಸ್ರಾಯೇಲಿನ ಮನೆಯವರಿಗೆ ದೊಡ್ಡ ಉಪಕಾರ ಮಾಡಿದನಲ್ಲಾ.</verse>
				<verse number="8">ಆತನು ನಿಶ್ಚಯವಾಗಿ, “ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ!” ಎಂದು ಹೇಳಿದನು. ಆದ್ದರಿಂದ ಅವರಿಗೆ ರಕ್ಷಕನಾಗಿದ್ದನು.</verse>
				<verse number="9">ಅವರಿಗೆ ಬಂದ ಎಲ್ಲಾ ಇಕ್ಕಟ್ಟಿನಲ್ಲಿ ಆತನಿಗೆ ಇಕ್ಕಟ್ಟಾಯಿತು. ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು. ತನ್ನ ಪ್ರೀತಿಯಲ್ಲಿಯೂ, ತನ್ನ ಕನಿಕರದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು. ಪೂರ್ವಕಾಲದ ದಿವಸಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.</verse>
				<verse number="10">ಆದರೆ ಅವರು ತಿರುಗಿಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಆದ್ದರಿಂದ ಆತನು ಬೇರೆಯಾಗಿ ಅವರಿಗೆ ಶತ್ರುವಾದನು. ಆತನೇ ಅವರಿಗೆ ವಿರೋಧವಾಗಿ ಯುದ್ಧಮಾಡಿದನು.</verse>
				<verse number="11">ಆಗ ಆತನು ಪೂರ್ವಕಾಲದ ದಿವಸಗಳನ್ನೂ, ಮೋಶೆಯನ್ನೂ, ಅವನ ಜನರನ್ನೂ ಜ್ಞಾಪಕಮಾಡಿಕೊಂಡು “ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಸುರಕ್ಷಿತವಾಗಿ ಮೇಲಕ್ಕೆ ಬರಮಾಡಿದವನು ಎಲ್ಲಿ? ಅವರ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?</verse>
				<verse number="12">ಮೋಶೆಯ ಬಲಗೈಯ ಮುಖಾಂತರ ತನ್ನ ಬಲವಾದ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡೆಸಿದವನೂ, ತನಗೆ ನಿತ್ಯವಾದ ಹೆಸರನ್ನು ಉಂಟುಮಾಡುವ ಹಾಗೆ ಅವರ ಮುಂದೆ ಜನರಾಶಿಯನ್ನೂ ಇಬ್ಬಾಗಿಸಿದವನು ಎಲ್ಲಿ?</verse>
				<verse number="13">ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡೆಸಿದವನು ಎಲ್ಲಿ?”</verse>
				<verse number="14">ಪಶುವು ತಗ್ಗಿಗೆ ಇಳಿಯುವ ಪ್ರಕಾರ, ಯೆಹೋವ ದೇವರ ಆತ್ಮರು ಅವರಿಗೆ ವಿಶ್ರಾಂತಿಯನ್ನು ಕೊಟ್ಟರು. ಈ ಪ್ರಕಾರ ನೀವು ನಿಮಗೆ ಮಹಿಮೆಯುಳ್ಳ ಹೆಸರನ್ನು ಉಂಟುಮಾಡುವುದಕ್ಕಾಗಿ, ನಿಮ್ಮ ಜನರನ್ನು ನಡಿಸಿದಿರಿ.</verse>
				<verse number="15">ಆಕಾಶದಿಂದ ಕೆಳಗೆ ನೋಡಿರಿ, ನಿಮ್ಮ ಪವಿತ್ರವೂ ಮಹಿಮೆಯೂ ಆದ ನಿಮ್ಮ ಸಿಂಹಾಸನದಿಂದ ದೃಷ್ಟಿಸಿ ನೋಡಿರಿ. ನಿಮ್ಮ ಆಸಕ್ತಿಯೂ, ನಿಮ್ಮ ಪರಾಕ್ರಮವೂ, ನಿಮ್ಮ ಹೃದಯದ ಘೋಷವೂ, ನಮ್ಮ ವಿಷಯವಾದ ನಿಮ್ಮ ಕರುಣೆ ಕನಿಕರಗಳೂ ಎಲ್ಲಿ? ಬಿಗಿಹಿಡಿದುಕೊಂಡಿದ್ದೀರೋ?</verse>
				<verse number="16">ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ, ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ಯೆಹೋವ ದೇವರಾದ ನೀವೇ ನಮ್ಮ ತಂದೆಯೂ, ನಮ್ಮ ವಿಮೋಚಕರೂ ಆಗಿದ್ದೀರಿ. ನಿಮ್ಮ ಹೆಸರು ಸದಾಕಾಲವೂ ಇದೆ</verse>
				<verse number="17">ಯೆಹೋವ ದೇವರೇ, ಏಕೆ ನಮ್ಮನ್ನು ನಿಮ್ಮ ಮಾರ್ಗಗಳಿಂದ ತಪ್ಪಿಹೋಗುವಂತೆ ಅನುಮತಿಸಿದ್ದೀರಿ? ಏಕೆ ನಮ್ಮ ಹೃದಯವನ್ನು ನಿಮಗೆ ಭಯಪಡದ ಹಾಗೆ ಕಠಿಣ ಮಾಡಿದ್ದೀರಿ? ನಿಮ್ಮ ಸೇವಕರಿಗೋಸ್ಕರವೂ, ನಿಮ್ಮ ಬಾಧ್ಯರಾಗಿರುವ ಗೋತ್ರಗಳ ನಿಮಿತ್ತ ನೀವು ಹಿಂದಿರುಗಿರಿ.</verse>
				<verse number="18">ಸ್ವಲ್ಪಕಾಲ ಮಾತ್ರ ನಿಮ್ಮ ಪರಿಶುದ್ಧ ಜನರು ಅದನ್ನು ಸ್ವಾಧೀನಮಾಡಿಕೊಂಡರು. ನಮ್ಮ ಶತ್ರುಗಳು ನಿಮ್ಮ ಪವಿತ್ರಾಲಯವನ್ನು ತುಳಿದುಬಿಟ್ಟಿದ್ದಾರೆ.</verse>
				<verse number="19">ನಾವು ಆದಿಯಿಂದಲೂ ನಿಮ್ಮವರಾಗಿದ್ದೇವೆ. ಅವರ ಮೇಲೆ ನೀವು ದೊರೆತನ ಮಾಡಲಿಲ್ಲ. ಅವರು ನಿಮ್ಮ ಹೆಸರನ್ನು ಧರಿಸಲೂ ಇಲ್ಲ.</verse>
			</chapter>
			<chapter number="64">
				<verse number="1">ಆಹಾ, ಆಕಾಶಗಳನ್ನು ಹರಿದುಬಿಟ್ಟು ಇಳಿದು ಬಾ! ನಿಮ್ಮ ದರ್ಶನವನ್ನು ಕಂಡು ಪರ್ವತಗಳು ಗಡಗಡನೆ ನಡುಗುವಂತೆಯೂ,</verse>
				<verse number="2">ಬೆಂಕಿ ಕಟ್ಟಿಗೆಯನ್ನು ಹೊತ್ತಿಸುವಂತೆಯೂ, ಬೆಂಕಿ ನೀರನ್ನು ಉಕ್ಕಿಸುವಂತೆಯೂ, ನೀನು ಇಳಿದುಬಂದು ನಿನ್ನ ಹೆಸರನ್ನು ನಿನ್ನ ವೈರಿಗಳಿಗೆ ತಿಳಿಯುವಂತೆ ಮಾಡು!</verse>
				<verse number="3">ನಾವು ಎದುರು ನೋಡದೆ ಇದ್ದ ಭಯಂಕರವಾದವುಗಳನ್ನು ನೀನು ಮಾಡಿದಾಗ ಇಳಿದು ಬಂದೆ, ಬೆಟ್ಟಗಳು ನಿನ್ನ ಸಮ್ಮುಖಕ್ಕೆ ಕರಗಿ ಹೋದವು.</verse>
				<verse number="4">ದೇವರೇ, ನಿನಗೋಸ್ಕರ ಕಾದುಕೊಳ್ಳುವವರಿಗೆ ನೀನು ಮಾಡುವುದನ್ನು ಲೋಕದ ಉತ್ಪತ್ತಿಗೆ ಮುಂಚೆ ದೇವರೇ ನಿನ್ನ ಹೊರತಾಗಿ ಯಾರೂ ಕೇಳಲಿಲ್ಲ. ಯಾರ ಕಿವಿಯೂ ಕೇಳಲಿಲ್ಲ. ಯಾರ ಕಣ್ಣೂ ಕಾಣಲಿಲ್ಲ.</verse>
				<verse number="5">ಸಂತೋಷಪಟ್ಟು ನೀತಿಯನ್ನು ಕೈಗೊಳ್ಳುವವರನ್ನೂ, ನಿಮ್ಮ ಮಾರ್ಗಗಳನ್ನು ಜ್ಞಾಪಕ ಮಾಡುವವನನ್ನೂ ನೀವು ಸಹಾಯಮಾಡಲು ಬರುತ್ತೀರಿ. ಆದರೂ ನಾವು ಪಾಪದಲ್ಲೇ ಮುನ್ನಡೆದೆವು. ಆದ್ದರಿಂದ ನೀವು ಬೇಸರಗೊಂಡಿರುವಿರಿ. ಹಾಗಾದರೆ, ನಮ್ಮಂಥವರಿಗೆ ರಕ್ಷಣೆ ಇದೆಯೇ?</verse>
				<verse number="6">ನಾವೆಲ್ಲರೂ ಅಶುದ್ಧನ ಹಾಗೆ ಇದ್ದೇವೆ. ನಮ್ಮ ನೀತಿ ಕಾರ್ಯಗಳೆಲ್ಲಾ ಮೈಲಿಗೆ ವಸ್ತ್ರದ ಹಾಗೆ ಇವೆ. ನಾವೆಲ್ಲರೂ ಎಲೆಯ ಹಾಗೆ ಒಣಗಿಹೋಗಿದ್ದೇವೆ. ನಮ್ಮ ಪಾಪಗಳು ಗಾಳಿಯಂತೆ ನಮ್ಮನ್ನು ಬಡಿದುಕೊಂಡು ಹೋಗಿವೆ.</verse>
				<verse number="7">ನಿನ್ನ ಹೆಸರನ್ನು ಕರೆಯುವವನೂ, ನಿನ್ನನ್ನು ಹಿಡಿದುಕೊಳ್ಳುವುದಕ್ಕೆ ಎಚ್ಚರಗೊಳ್ಳುವವನು ಒಬ್ಬನೂ ಇಲ್ಲ. ಏಕೆಂದರೆ ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ. ನಮ್ಮ ಪಾಪಗಳಿಗಾಗಿ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.</verse>
				<verse number="8">ಆದರೆ ಈಗ ಯೆಹೋವ ದೇವರೇ, ನಮ್ಮ ತಂದೆಯು ನೀನೇ, ನಾವು ಮಣ್ಣು. ನೀನು ನಮ್ಮ ಕುಂಬಾರನು. ನಾವೆಲ್ಲರೂ ನಿನ್ನ ಕೈಕೆಲಸಗಳು.</verse>
				<verse number="9">ಯೆಹೋವ ದೇವರೇ, ಅತ್ಯಧಿಕವಾಗಿ ಬೇಸರಗೊಳ್ಳಬೇಡ. ಎಂದೆಂದಿಗೂ ಪಾಪವನ್ನು ಜ್ಞಾಪಕ ಮಾಡಬೇಡ. ನೋಡಿರಿ, ನಾವು ಬೇಡುತ್ತೇವೆ, ದೃಷ್ಟಿ ಇಡಿರಿ. ನಾವೆಲ್ಲರೂ ನಿನ್ನ ಜನರೇ.</verse>
				<verse number="10">ನಿನ್ನ ಪರಿಶುದ್ಧ ಪಟ್ಟಣಗಳು ಅಡವಿಯಾದವು. ಚೀಯೋನು ಅಡವಿಯಾಯಿತು. ಯೆರೂಸಲೇಮು ಹಾಳಾಯಿತು.</verse>
				<verse number="11">ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಶೃಂಗಾರವಾದ ದೇವಾಲಯ ಬೆಂಕಿಯಿಂದ ಸುಟ್ಟುಹೋಯಿತು. ನಮ್ಮ ಅಮೂಲ್ಯ ವಸ್ತುಗಳೆಲ್ಲ ನಾಶವಾದವು.</verse>
				<verse number="12">ಇವು ಹೀಗಿರಲಾಗಿ ಯೆಹೋವ ದೇವರೇ, ನೀವು ಹಿಂಜರಿಯುತ್ತೀರೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿರೋ?</verse>
			</chapter>
			<chapter number="65">
				<verse number="1">“ಕೇಳದವರಿಗೂ ನಾನು ನನ್ನನ್ನು ಪ್ರಕಟಿಸಿಕೊಂಡಿದ್ದೇನೆ. ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು. ನನ್ನ ಹೆಸರನ್ನು ಕರೆಯದ ಜನಾಂಗಕ್ಕೆ, ‘ಇಗೋ, ಇದ್ದೇನೆ; ಇಗೋ, ಇದ್ದೇನೆ,’ ಎಂದು ಹೇಳಿದೆನು.</verse>
				<verse number="2">ಒಳ್ಳೆಯದಲ್ಲದ ಮಾರ್ಗದಲ್ಲಿ ತಮ್ಮ ಆಲೋಚನೆಗಳ ಪ್ರಕಾರ ನಡೆದುಕೊಂಡು ತಿರುಗಿಬೀಳುವ ಜನರಿಗೆ ದಿನವೆಲ್ಲಾ ನಾನು ಕೈಚಾಚಿ ಕರೆದೆನು.</verse>
				<verse number="3">ಇವರು ಯಾವಾಗಲೂ ನನ್ನ ಮುಖದ ಮುಂದೆ ನನಗೆ ಕೋಪೋದ್ರೇಕವನ್ನು ಎಬ್ಬಿಸುವ ಜನರು. ತೋಟಗಳಲ್ಲಿ ಬಲಿ ಅರ್ಪಿಸಿ, ಇಟ್ಟಿಗೆಯ ಬಲಿಪೀಠದ ಮೇಲೆ ಧೂಪ ಸುಡುವರು.</verse>
				<verse number="4">ಸಮಾಧಿಗಳಲ್ಲಿ ಉಳಿದು, ಗವಿಗಳಲ್ಲಿ ತಂಗುವರು. ಹಂದಿಯ ಮಾಂಸವನ್ನು ತಿನ್ನುವರು ತಮ್ಮ ಪಾತ್ರೆಗಳಲ್ಲಿ ಅಶುದ್ಧ ಪದಾರ್ಥಗಳ ಸಾರನ್ನು ಇಟ್ಟುಕೊಂಡು,</verse>
				<verse number="5">‘ನಿನ್ನಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ. ಏಕೆಂದರೆ ನಿನಗಿಂತ ಪರಿಶುದ್ಧನಾಗಿದ್ದೇನೆ,’ ಎಂದು ಹೇಳುವರು. ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ, ದಿನವೆಲ್ಲಾ ಉರಿಯುವ ಬೆಂಕಿಯಾಗಿಯೂ ಇದ್ದಾರೆ.</verse>
				<verse number="6">“ನನ್ನ ಮುಂದೆ ಅದು ಬರೆಯಲಾಗಿದೆ. ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ. ಅವರ ಮಡಿಲಲ್ಲಿ ಪ್ರತಿಫಲ ಕೊಡುತ್ತೇನೆ.</verse>
				<verse number="7">ನಿಮ್ಮ ಪಾಪಗಳಿಗೂ, ನಿಮ್ಮ ತಂದೆಗಳ ಪಾಪಗಳಿಗೂ ಕೂಡ ಪ್ರತಿಫಲ ಕೊಡುತ್ತೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು, ಗುಡ್ಡಗಳ ಮೇಲೆ ನನ್ನನ್ನು ಪರಿಹಾಸ್ಯ ಮಾಡಿದರಲ್ಲಾ. ಹೀಗಿರುವುದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಮಡಿಲಲ್ಲಿ ಅಳೆದು ಸುರಿಸುವೆನು.”</verse>
				<verse number="8">ಯೆಹೋವ ದೇವರು ಹೀಗೆನ್ನುತ್ತಾರೆ: “ರಸ ದೊರೆಯಬಹುದಾದ ದ್ರಾಕ್ಷಿ ಗೊಂಚಲನ್ನು ಒಬ್ಬನು ನೋಡಿ, ‘ಹಾಳು ಮಾಡಬೇಡ, ಅದರಲ್ಲಿ ಪ್ರಯೋಜನವಿದೆ,’ ಎನ್ನುವಂತೆ ನಾನು ನನ್ನ ಸೇವಕರನ್ನು ಲಕ್ಷ್ಯಕ್ಕೆ ತಂದು ಇವರನ್ನೆಲ್ಲಾ ಹಾಳುಮಾಡಬಾರದು ಎಂದುಕೊಳ್ಳುವೆನು.</verse>
				<verse number="9">ಯಾಕೋಬಿನೊಳಗಿಂದ ಒಂದು ಸಂತಾನವನ್ನೂ, ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನು ಹೊರಗೆ ಬರಮಾಡುವೆನು. ನಾನು ಆಯ್ದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು. ನನ್ನ ಸೇವಕರು ಅದರಲ್ಲಿ ವಾಸವಾಗುವರು.</verse>
				<verse number="10">ನನ್ನನ್ನು ಹುಡುಕುವ ನನ್ನ ಜನರಿಗೋಸ್ಕರ ಶಾರೋನು ಮಂದೆಗಳ ಹಟ್ಟಿಯಾಗಿಯೂ, ಆಕೋರಿನ ತಗ್ಗು, ದನಗಳು ಮಲಗುವ ಸ್ಥಳವಾಗಿಯೂ ಇರುವುದು, ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="11">“ಆದರೆ ಯೆಹೋವನಾದ ನನ್ನನ್ನು ತೊರೆದು, ನನ್ನ ಪವಿತ್ರ ಪರ್ವತವನ್ನು ಮರೆತು, ಶುಭದಾಯಕ ದೇವತೆಗೆ ಔತಣವನ್ನು ಅಣಿಮಾಡಿ, ಗಾದ್ ಎಂಬ ಅದೃಷ್ಟ ದೇವತೆಗೆ ಮದ್ಯವನ್ನು ತುಂಬಾ ಬೆರೆಸಿದ ನಿಮಗೆ</verse>
				<verse number="12">ಖಡ್ಗವನ್ನೇ ಗತಿಯಾಗ ಮಾಡುವೆನು. ಆದ್ದರಿಂದ ನಿಮ್ಮನ್ನು ಖಡ್ಗಕ್ಕೆ ನೇಮಿಸುವೆನು. ನೀವೆಲ್ಲರು ಕೊಲೆಗೆ ಬೊಗ್ಗಿಕೊಳ್ಳುವಿರಿ. ಏಕೆಂದರೆ, ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ. ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ. ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.”</verse>
				<verse number="13">ಹೀಗಿರುವುದರಿಂದ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: “ನನ್ನ ಸೇವಕರು ತಿನ್ನುವರು. ಆದರೆ ನೀವು ಹಸಿದಿರುವಿರಿ. ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿ ಇರುವಿರಿ. ಇಗೋ, ನನ್ನ ಸೇವಕರು ಸಂತೋಷಪಡುವರು, ಆದರೆ ನೀವು ನಾಚಿಕೆ ಪಡುವಿರಿ.</verse>
				<verse number="14">ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.</verse>
				<verse number="15">ನಿಮ್ಮ ಹೆಸರನ್ನು ನಾನು ಆಯ್ದುಕೊಂಡವರಿಗೆ ಶಾಪವಾಗಿ ಉಳಿಸುವಿರಿ. ಹೇಗೆಂದರೆ, ಸಾರ್ವಭೌಮ ಯೆಹೋವ ದೇವರು ಅಪನಂಬಿಗಸ್ತರಾದ ನಿಮ್ಮನ್ನು ಕೊಂದುಹಾಕಿ, ತಮ್ಮ ಸೇವಕರಿಗಾದರೋ ಬೇರೆ ಹೆಸರನ್ನು ನೀಡುವರು.</verse>
				<verse number="16">ಆಗ ದೇಶದಲ್ಲಿ ತನ್ನನ್ನು ಆಶೀರ್ವದಿಸುವವನು, ಸತ್ಯ ದೇವರಲ್ಲಿ ತನ್ನನ್ನು ಆಶೀರ್ವದಿಸಿಕೊಳ್ಳುವನು; ದೇಶದಲ್ಲಿ ಆಣೆ ಇಟ್ಟುಕೊಳ್ಳುವವನು, ಸತ್ಯ ದೇವರಲ್ಲಿ ಆಣೆ ಇಟ್ಟುಕೊಳ್ಳುವನು. ಏಕೆಂದರೆ ಮುಂಚಿನ ಕಷ್ಟಗಳು ಮರೆತು ಹೋಗಿವೆ, ಮತ್ತು ಅವು ನನ್ನ ಕಣ್ಣಿಗೆ ಮರೆಯಾಗಿವೆ.</verse>
				<verse number="17">“ನಾನು ಹೊಸ ಆಕಾಶವನ್ನೂ, ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವುದಿಲ್ಲ ಇಲ್ಲವೆ ಅವು ಸ್ಮರಣೆಗೆ ಬರುವುದಿಲ್ಲ.</verse>
				<verse number="18">ಆದರೆ ನಾನು ಸೃಷ್ಟಿಸುವುದರ ವಿಷಯದಲ್ಲಿ ಸಂತೋಷಿಸಿ, ಎಂದೆಂದಿಗೂ ಉಲ್ಲಾಸಪಡಿರಿ. ಏಕೆಂದರೆ ಇಗೋ, ನಾನು ಯೆರೂಸಲೇಮಿನಲ್ಲಿ ಉಲ್ಲಾಸವನ್ನೂ, ನನ್ನ ಜನರಲ್ಲಿ ಸಂತೋಷವನ್ನೂ ಸೃಷ್ಟಿಸುತ್ತೇನೆ.</verse>
				<verse number="19">ಯೆರೂಸಲೇಮಿನಲ್ಲಿ ಉಲ್ಲಾಸಿಸಿ, ನನ್ನ ಜನರಲ್ಲಿ ಸಂತೋಷ ಪಡುವೆನು. ಅದರಲ್ಲಿ ಅಳುವ ಧ್ವನಿಯೂ, ಪ್ರಲಾಪದ ಧ್ವನಿಯೂ ಇನ್ನು ಕೇಳಿಬರುವುದಿಲ್ಲ.</verse>
				<verse number="20">“ಅಲ್ಲಿ ಕೆಲವು ದಿನಗಳು ಮಾತ್ರ ಬದುಕತಕ್ಕ ಕೂಸೂ, ವೃದ್ಧನೂ ಇರುವುದಿಲ್ಲ. ಮಗುವು ನೂರು ವರುಷದವನಾಗಿ ಸಾಯುವುದು. ಆದರೆ ನೂರು ವರುಷವನ್ನು ತಲುಪಲು ವಿಫಲನಾದವನನ್ನು ಶಾಪಗ್ರಸ್ತ ಎಂದು ಪರಿಗಣಿಸಲಾಗುತ್ತದೆ.</verse>
				<verse number="21">ಇದಲ್ಲದೆ ಅವರು ಮನೆಗಳನ್ನು ಕಟ್ಟಿ, ವಾಸಮಾಡುವರು; ದ್ರಾಕ್ಷಿತೋಟಗಳನ್ನು ನೆಟ್ಟು, ಅವುಗಳ ಫಲವನ್ನು ಉಣ್ಣುವರು.</verse>
				<verse number="22">ಅವರು ಕಟ್ಟಿದ ಮನೆಗಳಲ್ಲಿ ಬೇರೆಯವರು ವಾಸಮಾಡುವುದಿಲ್ಲ. ಅವರು ನೆಟ್ಟ ತೋಟದ ಫಲವನ್ನು ಇನ್ನೊಬ್ಬರು ತಿನ್ನುವುದಿಲ್ಲ. ಏಕೆಂದರೆ, ಮರಗಳ ಹಾಗೆ ನನ್ನ ಜನರು ಬಹುಕಾಲ ಬಾಳುವರು. ನಾನು ಆಯ್ದುಕೊಂಡವರು ತಮ್ಮ ಕೈಕೆಲಸಗಳನ್ನು ಅನುಭವಿಸುವರು.</verse>
				<verse number="23">ಅವರು ವ್ಯರ್ಥವಾಗಿ ದುಡಿಯರು. ಕಷ್ಟವನ್ನು ಎದುರುಗೊಳ್ಳುವುದಿಲ್ಲ. ಏಕೆಂದರೆ ಅವರು ಯೆಹೋವ ದೇವರ ಆಶೀರ್ವಾದ ಹೊಂದಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವಾದ ಹೊಂದುವುದು.</verse>
				<verse number="24">ಅವರು ಕರೆಯುವುದಕ್ಕಿಂತ ಮುಂಚೆ ನಾನು ಉತ್ತರಕೊಡುವೆನು. ಅವರು ಇನ್ನೂ ಮಾತನಾಡುತ್ತಿರುವಾಗಲೇ ನಾನು ಕೇಳುವೆನು.</verse>
				<verse number="25">ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು; ಅವು ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾವ ಕೇಡೂ ಮಾಡುವುದಿಲ್ಲ, ನಾಶವೂ ಮಾಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
			</chapter>
			<chapter number="66">
				<verse number="1">ಯೆಹೋವ ದೇವರು ಹೇಳುವುದೇನೆಂದರೆ: “ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ, ನೀವು ನನಗೋಸ್ಕರ ಕಟ್ಟುವ ಮನೆ ಎಲ್ಲಿ? ನನ್ನ ವಿಶ್ರಾಂತಿಯ ಸ್ಥಳವು ಎಲ್ಲಿ?</verse>
				<verse number="2">ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯೇ. ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಕಟಾಕ್ಷಿಸುವವನು ಎಂಥವನೆಂದರೆ: ದೀನನೂ, ಮನಮುರಿದವನೂ, ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.</verse>
				<verse number="3">ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡುವವನ ಹಾಗಿದ್ದಾನೆ. ಕುರಿಮರಿಯನ್ನು ಬಲಿ ಕೊಡುವವನು, ನಾಯಿಯ ಕುತ್ತಿಗೆಯನ್ನು ಕಡಿಯುವವನ ಹಾಗಿದ್ದಾನೆ. ಕಾಣಿಕೆಯನ್ನು ಅರ್ಪಿಸುವವನು, ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಹಾಕುವವನು, ವಿಗ್ರಹವನ್ನು ಪೂಜಿಸುವವನ ಹಾಗಿದ್ದಾನೆ. ಹೀಗೆ, ಅವರು ಸ್ವಂತ ಮಾರ್ಗಗಳನ್ನು ಆಯ್ದುಕೊಂಡಿದ್ದಾರೆ. ಅವರ ಪ್ರಾಣವು ಅವರ ಅಸಹ್ಯಗಳಲ್ಲಿ ಹರ್ಷಿಸುತ್ತವೆ.</verse>
				<verse number="4">ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು, ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು. ಏಕೆಂದರೆ ನಾನು ಕೂಗಿದಾಗ, ಯಾರು ಉತ್ತರ ಕೊಡಲಿಲ್ಲ. ನಾನು ಹೇಳಿದಾಗ, ಇವರು ಕೇಳಲಿಲ್ಲ. ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ, ನನಗೆ ಇಷ್ಟವಲ್ಲದ್ದನ್ನು ಆರಿಸಿಕೊಂಡರು.”</verse>
				<verse number="5">ಯೆಹೋವ ದೇವರ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! “ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, ‘ಯೆಹೋವ ದೇವರು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ’ ಎಂದು ಹೇಳಿದ್ದಾರಲ್ಲಾ. ಅವರಿಗಂತೂ ಅವಮಾನವಾಗುವುದು.</verse>
				<verse number="6">ಪಟ್ಟಣದೊಳಗಿನ ಗದ್ದಲದ ಶಬ್ದವು ದೇವಾಲಯದೊಳಗಿಂದ ಸ್ವರವು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ಯೆಹೋವ ದೇವರ ಸ್ವರವಾಗಿದೆ.</verse>
				<verse number="7">“ಅವಳಿಗೆ ನೋವು ಆಗುವುದಕ್ಕಿಂತ ಮುಂಚೆಯೇ ಹೆತ್ತಳು. ವೇದನೆ ಬರುವುದಕ್ಕಿಂತ ಮುಂಚೆಯೇ ಗಂಡು ಕೂಸು ಪಡೆದಳು.</verse>
				<verse number="8">ಇಂಥ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥ ಸಂಗತಿಯನ್ನು ಕಂಡವರಾರು? ಒಂದೇ ದಿನದಲ್ಲಿ ದೇಶ ಒಂದು ಹುಟ್ಟೀತೇ? ಕ್ಷಣಮಾತ್ರದಲ್ಲಿ ರಾಷ್ಟ್ರವನ್ನು ಹೆರಲಿಕ್ಕಾದೀತೇ? ಆದರೂ ಪ್ರಸವವೇದನೆ ತೊಡಗಿದೊಡನೆ ಚೀಯೋನೆಂಬಾಕೆ ಮಕ್ಕಳನ್ನು ಹೆತ್ತಿದ್ದಾಳೆ.</verse>
				<verse number="9">ನಾನು ಪ್ರಸವಕ್ಕೆ ತಂದಮೇಲೆ ಹೆರಿಗೆಯಾಗದಂತೆ ತಡೆಯುವೆನೋ?” ಎಂದು ಯೆಹೋವ ದೇವರು ಹೇಳುತ್ತಾನೆ. “ನಾನು ಪ್ರಸವಕ್ಕೆ ತಂದಮೇಲೆ, ಪ್ರಸವವಾಗದೆ ಇರಲು ಗರ್ಭ ಮುಚ್ಚಿಬಿಡುವೆನೇ?” ಎಂದು ನಿನ್ನ ದೇವರು ಕೇಳುತ್ತಾನೆ.</verse>
				<verse number="10">“ಯೆರೂಸಲೇಮಿನ ಸಂಗಡ ನೀವು ಸಂತೋಷಿಸಿರಿ. ಅವಳನ್ನು ಪ್ರೀತಿ ಮಾಡುವವರೆಲ್ಲಾ ಆಕೆಯೊಂದಿಗೆ ಉಲ್ಲಾಸಪಡಿರಿ. ಅವಳಿಗೋಸ್ಕರ ದುಃಖಿಸಿದವರೆಲ್ಲರೂ, ಆಕೆಯ ಸಂತೋಷಕ್ಕಾಗಿ ಆನಂದಪಡಿರಿ.</verse>
				<verse number="11">ಆಕೆಯ ಸಾಂತ್ವನ ಸ್ತನವನ್ನು ಕುಡಿದು ನೀವು ತೃಪ್ತಿಯಾಗಿರುವಿರಿ. ನೀವು ಕುಡಿಯುವಿರಿ ಮತ್ತು ಅದರ ಸಮೃದ್ಧಿಯು ನಿಮ್ಮ ಸಂತೋಷಕ್ಕೆ ಕಾರಣವಾಗಿದೆ.”</verse>
				<verse number="12">ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ನದಿಯಂತೆ ಸಮಾಧಾನವನ್ನೂ, ಹರಿಯುವ ಹಳ್ಳದಂತೆ ಜನಾಂಗಗಳ ವೈಭವವನ್ನೂ ಆಕೆಯ ಕಡೆಗೆ ಬರಮಾಡುವೆನು. ಆಗ ನೀವು ಪಾನ ಮಾಡುವಿರಿ; ನಿಮ್ಮನ್ನು ಆಕೆಯ ಪಕ್ಕೆಯಲ್ಲಿ ಎತ್ತಿಕೊಂಡುಹೋಗುವರು. ನೀವು ಆಕೆಯ ಮಡಿಲಲ್ಲಿ ನಲಿದಾಡುವಿರಿ.</verse>
				<verse number="13">ತಾಯಿ ತನ್ನ ಮಗುವನ್ನು ಆದರಿಸುವ ಪ್ರಕಾರವೇ, ನಾನು ನಿಮ್ಮನ್ನು ಆದರಿಸುವೆನು. ಯೆರೂಸಲೇಮಿನ ನಿಮಿತ್ತವೇ, ಆದರಣೆ ಪಡುವಿರಿ.”</verse>
				<verse number="14">ನೀವು ಅದನ್ನು ಕಾಣುವಾಗ, ನಿಮ್ಮ ಹೃದಯವು ಸಂತೋಷಿಸುವುದು. ನಿಮ್ಮ ಎಲುಬುಗಳು ಹಸಿರು ಹುಲ್ಲಿನ ಹಾಗೆ ಚಿಗುರುವುವು. ಯೆಹೋವ ದೇವರ ಕೈ ತಮ್ಮ ಸೇವಕರ ಮೇಲೆಯೂ, ಅವರ ರೌದ್ರವು ತಮ್ಮ ಶತ್ರುಗಳ ಮೇಲೆ ಕಾಣಬರುವುದು.</verse>
				<verse number="15">ಯೆಹೋವ ದೇವರು ಬೆಂಕಿಯೊಡನೆ ಬರುವರು. ಅವರ ರಥಗಳು ಬಿರುಗಾಳಿಯ ಹಾಗೆ ಇರುವುವು. ಕಠಿಣವಾದ ತಮ್ಮ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತಮ್ಮ ಗದರಿಕೆಯನ್ನೂ ಸಲ್ಲಿಸುವುದಕ್ಕಾಗಿಯೇ ಬರುವರು.</verse>
				<verse number="16">ಏಕೆಂದರೆ ಬೆಂಕಿಯಿಂದಲೂ ತಮ್ಮ ಖಡ್ಗದಿಂದಲೂ ಯೆಹೋವ ದೇವರು ಮನುಷ್ಯರಿಗೆಲ್ಲಾ ನ್ಯಾಯತೀರಿಸುವರು. ಯೆಹೋವ ದೇವರಿಂದ ಹತರಾಗುವವರು ಅನೇಕರಾಗಿರುವರು.</verse>
				<verse number="17">“ತೋಟಗಳಲ್ಲಿ ಒಬ್ಬರ ಹಿಂದೊಬ್ಬರು ಮಧ್ಯದಲ್ಲಿ ತಮ್ಮನ್ನು ಪರಿಶುದ್ಧ ಮಾಡಿಕೊಂಡು, ಪವಿತ್ರ ಮಾಡಿಕೊಳ್ಳುವವರೂ; ಹಂದಿ ಮಾಂಸವನ್ನೂ, ಅಸಹ್ಯವಾದದ್ದನ್ನೂ, ಇಲಿಯನ್ನೂ ತಿನ್ನುವವರು ಒಟ್ಟಾಗಿ ದಹಿಸಿ ಹೋಗುವರು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="18">“ನಾನು ಅವರ ಕ್ರಿಯೆಗಳನ್ನೂ ಅವರ ಆಲೋಚನೆಗಳನ್ನೂ ಬಲ್ಲೆನು. ಎಲ್ಲಾ ಜನಾಂಗಗಳನ್ನೂ ಭಾಷೆಯವರನ್ನೂ ಇನ್ನು ಮುಂದೆ ಒಟ್ಟಿಗೆ ಬರಮಾಡುವೆನು. ಆಗ ಅವರು ಬಂದು ನನ್ನ ಮಹಿಮೆಯನ್ನು ನೋಡುವರು.</verse>
				<verse number="19">“ಅವರ ಮಧ್ಯದಲ್ಲಿ ಗುರುತನ್ನಿಟ್ಟು, ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ, ತಾರ್ಷೀಷ್, ಪೂಲ್, ಬಿಲ್ಲು ಪ್ರಯೋಗಿಸುವುದರಲ್ಲಿ ಪ್ರವೀಣರಾದ ಲೂದ್, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ನನ್ನ ಸಮಾಚಾರವನ್ನು ಕೇಳದ ನನ್ನ ಮಹಿಮೆಯನ್ನು ಕಾಣದೆ ಇರುವ ದೂರ ದ್ವೀಪನಿವಾಸಿಗಳಿಗೂ ಕಳುಹಿಸುವೆನು. ಅವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.</verse>
				<verse number="20">ಅವರು ನಿಮ್ಮ ಸಹೋದರರನ್ನು ಕುದುರೆಗಳ ಮೇಲೆಯೂ ರಥಗಳಲ್ಲಿಯೂ ಪಲ್ಲಕ್ಕಿಗಳಲ್ಲಿಯೂ ಹೇಸರಗತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ಸಮಸ್ತ ಜನಾಂಗಗಳೊಳಗಿಂದ ಯೆಹೋವ ದೇವರಿಗೆ ಕಾಣಿಕೆಯಾಗಿ ಇಸ್ರಾಯೇಲರು ಕಾಣಿಕೆಯನ್ನು ಶುದ್ಧಪಾತ್ರೆಯಲ್ಲಿ ಯೆಹೋವ ದೇವರು ಮನೆಗೆ ತರುವ ಪ್ರಕಾರ ನನ್ನ ಪರಿಶುದ್ಧ ಪರ್ವತವಾದ ಯೆರೂಸಲೇಮಿಗೆ ತರುವರೆಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="21">ಅವರಲ್ಲಿ ಯಾಜಕರಿಗಾಗಿಯೂ ಲೇವಿಯರಿಗಾಗಿಯೂ ಅವರಿಂದ ತೆಗೆದುಕೊಳ್ಳುವೆನು” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="22">“ನಾನು ಉಂಟುಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ, ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗುವುದು,” ಎಂದು ಯೆಹೋವ ದೇವರು ಘೋಷಿಸುತ್ತಾರೆ.</verse>
				<verse number="23">ಇದಾದ ಮೇಲೆ, “ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ ಒಂದೊಂದು ಸಬ್ಬತ್ ದಿನದಲ್ಲಿಯೂ ಮನುಷ್ಯರೆಲ್ಲಾ ನನ್ನ ಮುಂದೆ ಆರಾಧಿಸುವುದಕ್ಕೆ ಬರುವರು” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="24">“ಅವರು ಮುಂದೆ ಹೋಗಿ ನನಗೆ ವಿರೋಧವಾಗಿ ದ್ರೋಹಮಾಡಿದ ಮನುಷ್ಯರ ಹೆಣಗಳನ್ನು ನೋಡುವರು. ಅವುಗಳನ್ನು ಕಡಿಯುವ ಹುಳ ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ, ಅವರು ಎಲ್ಲಾ ಮನುಷ್ಯರಿಗೆ ಹೇಸಿಗೆಯಾಗುವರು.”</verse>
			</chapter>
		</book>
		<book number="24">
			<chapter number="1">
				<verse number="1">ಬೆನ್ಯಾಮೀನ್ ಸೀಮೆಗೆ ಸೇರಿ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.</verse>
				<verse number="2">ಯೆಹೂದದ ಅರಸನೂ ಆಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಲ್ಲಿ ಯೆಹೋವ ದೇವರ ವಾಕ್ಯವು ಇವನಿಗೆ ಕೇಳಿಬಂತು.</verse>
				<verse number="3">ಅಲ್ಲದೆ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಕಾಲದ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆ ಹೋಗುವ ತನಕ ಯೆಹೋವ ದೇವರ ವಾಕ್ಯವು ಒದಗುತ್ತಿತ್ತು.</verse>
				<verse number="4">ಯೆಹೋವ ದೇವರು ಈ ವಾಕ್ಯವನ್ನು ನನಗೆ ದಯಪಾಲಿಸಿದರು,</verse>
				<verse number="5">“ನಾನು ನಿನ್ನನ್ನು ತಾಯಿಯ ಗರ್ಭದಲ್ಲಿ ನಿರ್ಮಿಸುವುದಕ್ಕಿಂತ ಮುಂಚೆಯೇ ನಿನ್ನನ್ನು ತಿಳಿದಿದ್ದೆನು. ನೀನು ಹುಟ್ಟುವುದಕ್ಕಿಂತ ಮುಂಚೆ ನಿನ್ನನ್ನು ಪ್ರತಿಷ್ಠಿಸಿದ್ದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯಾಗಿ ನೇಮಿಸಿದ್ದೇನೆ.”</verse>
				<verse number="6">ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ ನಾನು ಮಾತು ಬಲ್ಲವನಲ್ಲ, ನಾನು ಚಿಕ್ಕವನು,” ಎಂದೆನು.</verse>
				<verse number="7">ಆಗ ಯೆಹೋವ ದೇವರು ನನಗೆ, “ ‘ನಾನು ಚಿಕ್ಕವನೆಂದು ಹೇಳಬೇಡ.’ ಏಕೆಂದರೆ ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ನೀನು ಹೋಗಬೇಕು. ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಮಾತನಾಡಬೇಕು.</verse>
				<verse number="8">ಅವರಿಗೆ ಭಯಪಡಬೇಡ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಎಂದು ಯೆಹೋವ ದೇವರಾದ ನಾನು ಹೇಳುತ್ತೇನೆ.</verse>
				<verse number="9">ಆಗ ಯೆಹೋವ ದೇವರು ಕೈಚಾಚಿ, ನನ್ನ ಬಾಯಿಯನ್ನು ಮುಟ್ಟಿ ನನಗೆ, “ಇಗೋ, ನನ್ನ ವಾಕ್ಯಗಳನ್ನು ನಿನ್ನ ಬಾಯಲ್ಲಿ ಇಟ್ಟಿದ್ದೇನೆ.</verse>
				<verse number="10">ನೋಡು, ಈ ಹೊತ್ತು ನೀನು ಕೀಳುವುದಕ್ಕೂ, ಕೆಳಗೆ ಹಾಕಿಬಿಡುವುದಕ್ಕೂ, ನಾಶಮಾಡುವುದಕ್ಕೂ, ಕೆಡವಿ ಹಾಕುವುದಕ್ಕೂ, ಕಟ್ಟುವುದಕ್ಕೂ, ನೆಡುವುದಕ್ಕೂ ನಾನು ನಿನ್ನನ್ನು ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ನಿನ್ನನ್ನು ನೇಮಿಸಿದ್ದೇನೆ,” ಎಂದರು.</verse>
				<verse number="11">ಇದಲ್ಲದೆ ಯೆಹೋವ ದೇವರ ವಾಕ್ಯವು ನನಗೆ, “ಯೆರೆಮೀಯನೇ, ನೀನು ಏನು ಕಾಣುತ್ತೀ?” ಎಂದು ಕೇಳಿದರು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ,” ಎಂದೆನು.</verse>
				<verse number="12">ಆಗ ಯೆಹೋವ ದೇವರು ನನಗೆ, “ನೀನು ಚೆನ್ನಾಗಿ ನೋಡಿದ್ದೀ. ಏಕೆಂದರೆ ನನ್ನ ವಾಕ್ಯವನ್ನು ನೆರವೇರಿಸಲು ಎಚ್ಚರಗೊಂಡಿದ್ದೇನೆಂದು, ತಿಳಿದುಕೊ” ಎಂದರು.</verse>
				<verse number="13">ಎರಡನೆಯ ಸಾರಿ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ, “ನೀನು ಏನು ನೋಡುತ್ತೀ?” ಎಂದು ಕೇಳಿದ್ದಕ್ಕೆ, ನಾನು, “ಬೇಯುವ ಮಡಕೆಯನ್ನು ನೋಡುತ್ತೇನೆ, ಅದರ ಬಾಯಿ ಉತ್ತರದ ಕಡೆಗೆ ಇದೆ,” ಎಂದೆನು.</verse>
				<verse number="14">ಆಗ ಯೆಹೋವ ದೇವರು ನನಗೆ, “ಉತ್ತರ ಕಡೆಯಿಂದ ದೇಶದ ನಿವಾಸಿಗಳೆಲ್ಲರ ಮೇಲೆ ಕೇಡು ಹೊರಟು ಬರುವುದು.</verse>
				<verse number="15">ಏಕೆಂದರೆ ನಾನು ಉತ್ತರದಲ್ಲಿರುವ ರಾಜ್ಯಗಳ ಕುಲಗಳನ್ನೆಲ್ಲಾ ಕರೆಯುತ್ತೇನೆ. “ಅವರು ಬಂದು ತಮ್ಮ ತಮ್ಮ ಸಿಂಹಾಸನಗಳನ್ನು ಯೆರೂಸಲೇಮಿನ ಬಾಗಿಲುಗಳ ಪ್ರವೇಶದಲ್ಲಿಯೂ, ಅದರ ಸುತ್ತಲಾಗಿರುವ ಗೋಡೆಗಳಿಗೆ ಎದುರಾಗಿಯೂ ಯೆಹೂದದ ಎಲ್ಲಾ ಪಟ್ಟಣಗಳಿಗೆ ಎದುರಾಗಿಯೂ ಇರಿಸುವರು.</verse>
				<verse number="16">ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯುವೆನು.</verse>
				<verse number="17">“ಆದ್ದರಿಂದ ಈಗ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು, ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಅವರ ಸಂಗಡ ಮಾತನಾಡು. ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಗೆ ಭಯಪಡಬೇಡ.</verse>
				<verse number="18">ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧವಾಗಿಯೂ, ಅದರ ಪ್ರಧಾನರಿಗೆ ವಿರೋಧವಾಗಿಯೂ, ಅದರ ಯಾಜಕರಿಗೆ ವಿರೋಧವಾಗಿಯೂ, ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತ್ತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ, ಕಬ್ಬಿಣದ ಸ್ತಂಭವಾಗಿಯೂ, ಕಂಚಿನ ಗೋಡೆಗಳಾಗಿಯೂ ಮಾಡಿದ್ದೇನೆ.</verse>
				<verse number="19">ಅವರು ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಗೆಲ್ಲುವುದಿಲ್ಲ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಇದು ಯೆಹೋವ ದೇವರ ನುಡಿ.</verse>
			</chapter>
			<chapter number="2">
				<verse number="1">ಯೆಹೋವ ದೇವರು ನನಗೆ ದಯಪಾಲಿಸಿದ ಸಂದೇಶ ಇದು:</verse>
				<verse number="2">“ನೀನು ಹೋಗಿ ಯೆರೂಸಲೇಮ್ ನಗರಕ್ಕೆ ಕೇಳಿಸುವಂತೆ ಈ ಸಂದೇಶವನ್ನು ಸಾರು: “ಯೆಹೋವ ದೇವರು ಹೀಗೆನ್ನುತ್ತಾರೆ, “ ‘ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆ ಇಲ್ಲದ ಅರಣ್ಯ ಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ, ಇದು ನಿನ್ನ ಹಿತಕ್ಕಾಗಿಯೇ.</verse>
				<verse number="3">ಇಸ್ರಾಯೇಲು ಯೆಹೋವ ದೇವರಿಗೆ ಪರಿಶುದ್ಧವೂ, ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿದೆ ಅವಳನ್ನು ತಿಂದು ಬಿಟ್ಟವರೆಲ್ಲರೂ ಅಪರಾಧಿಗಳಾಗುವರು. ಅವರಿಗೆ ಕೇಡು ಬರುವುದು,’ ” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="4">ಓ ಯಾಕೋಬಿನ ಮನೆತನವೇ, ಇಸ್ರಾಯೇಲಿನ ಮನೆತನದ ಎಲ್ಲಾ ಕುಲಗಳೇ, ಯೆಹೋವ ದೇವರ ವಾಕ್ಯವನ್ನು ನೀವು ಕೇಳಿರಿ.</verse>
				<verse number="5">ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ, ವ್ಯರ್ಥವಾಗುವ ಹಾಗೆ ನನ್ನಲ್ಲಿ ಏನು ತಪ್ಪನ್ನು ಕಂಡಿದ್ದಾರೆ?</verse>
				<verse number="6">ಅವರು, ‘ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿ ನಮ್ಮನ್ನು ಮರುಭೂಮಿಯಲ್ಲಿ ಕಾಡು ಕುಳಿಗಳು ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದುಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡೆಸಿದ ಯೆಹೋವ ದೇವರು ಎಲ್ಲಿ?’ ಎಂದು ಪ್ರಶ್ನೆ ಮಾಡಲಿಲ್ಲ.</verse>
				<verse number="7">ನಾನು ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಸಾರವನ್ನೂ, ಮೇಲನ್ನೂ ತಿನ್ನುವ ಹಾಗೆ ಕರೆದುಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸೊತ್ತನ್ನು ಅಸಹ್ಯ ಮಾಡಿದಿರಿ.</verse>
				<verse number="8">ಯಾಜಕರು, ‘ಯೆಹೋವ ದೇವರು ಎಲ್ಲಿ?’ ಎಂದು ಕೇಳಲಿಲ್ಲ. ದೈವನಿಯಮವನ್ನು ಉಪದೇಶಿಸುವವರು ನನ್ನನ್ನು ತಿಳಿಯಲಿಲ್ಲ. ನಾಯಕರು ನನಗೆ ವಿರೋಧವಾಗಿ ದ್ರೋಹಮಾಡಿದರು. ಪ್ರವಾದಿಗಳು ಬಾಳನಿಂದ ಪ್ರವಾದಿಸಿದರು. ಪ್ರಯೋಜನವಿಲ್ಲದವುಗಳನ್ನು ಹಿಂದಟ್ಟಿದರು.</verse>
				<verse number="9">“ಆದ್ದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯವಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಇದಲ್ಲದೆ ನಿಮ್ಮ ಮಕ್ಕಳ ಸಂಗಡ ವ್ಯಾಜ್ಯವಾಡುವೆನು.</verse>
				<verse number="10">ಕಿತ್ತೀಮ್ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ. ಕೇದಾರಿಗೆ ಕಳುಹಿಸಿ ಚೆನ್ನಾಗಿ ತಿಳಿದುಕೊಳ್ಳಿರಿ. ಅಂಥದ್ದು ಉಂಟೋ ಎಂದು ನೋಡಿರಿ.</verse>
				<verse number="11">ಜನಾಂಗವು ತಮ್ಮ ದೇವರುಗಳನ್ನು ಅವು ದೇವರುಗಳಲ್ಲದೆ ಇದ್ದರೂ ಬದಲು ಮಾಡಿದ್ದುಂಟೋ? ಆದರೆ ನನ್ನ ಜನರು ತಮ್ಮ ವೈಭವವಾದ ದೇವರನ್ನು ಪ್ರಯೋಜನವಿಲ್ಲದ್ದಕ್ಕೆ ಬದಲು ಮಾಡಿದ್ದಾರೆ.</verse>
				<verse number="12">ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="13">“ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು, ತಮಗೆ ನೀರು ಹಿಡಿಯಲಾರದ ಒಡಕ ತೊಟ್ಟಿಗಳನ್ನೂ ಕೆತ್ತಿದ್ದಾರೆ.</verse>
				<verse number="14">ಇಸ್ರಾಯೇಲನು ಸೇವಕನೋ? ಮನೆಯಲ್ಲಿ ಹುಟ್ಟಿದ ಗುಲಾಮನೋ? ಅವನು ಏಕೆ ಸುಲಿಗೆಯಾದನು?</verse>
				<verse number="15">ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಗರ್ಜಿಸಿ, ಅಬ್ಬರಿಸುತ್ತವೆ. ಅವನ ದೇಶವನ್ನು ಹಾಳು ಮಾಡುತ್ತವೆ. ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.</verse>
				<verse number="16">ನೋಫ್ ಮತ್ತು ತಹಪನೇಸ್ ಪಟ್ಟಣಗಳವರು ನಿನ್ನ ನೆತ್ತಿಯನ್ನೂ ನುಣ್ಣಗೆ ಮೇದುಬಿಟ್ಟಿದ್ದಾರೆ.</verse>
				<verse number="17">ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡೆಯಲ್ಲವೋ?</verse>
				<verse number="18">ಈಗ ಶೀಹೋರಿನ ನೀರು ಕುಡಿಯುವುದಕ್ಕಾಗಿ ಈಜಿಪ್ಟಿನ ದಾರಿಯಲ್ಲಿ ನಿನಗೇನು ಕೆಲಸ? ಯೂಫ್ರೇಟೀಸ್ ನದಿಯ ನೀರು ಕುಡಿಯುವುದಕ್ಕಾಗಿ ಅಸ್ಸೀರಿಯದ ದಾರಿಯಲ್ಲಿ ನಿನಗೇನು ಕೆಲಸ?</verse>
				<verse number="19">ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವುದು. ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವುದು. ಹೀಗಿರುವುದರಿಂದ ನೀನು ನಿನ್ನ ದೇವರಾದ ಯೆಹೋವ ದೇವರನ್ನು ಬಿಟ್ಟದ್ದೂ, ನನ್ನ ಭಯವು ನಿನ್ನಲ್ಲಿ ಇಲ್ಲದಿರುವುದೂ, ಕೆಟ್ಟದ್ದೂ, ಕಹಿಯಾದದ್ದೂ ಎಂದು ತಿಳಿದುಕೊಂಡು ನೋಡು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.</verse>
				<verse number="20">“ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು, ನಿನ್ನ ಬಂಧನಗಳನ್ನು ಹರಿದುಬಿಟ್ಟೆನು. ಆದರೆ, ‘ನಾನು ಸೇವೆಮಾಡುವುದಿಲ್ಲ!’ ಎಂದು ನೀನು ಹೇಳಿದೆ. ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೂ ನೀನು ವೇಶ್ಯೆಯಾಗಿ ನಡೆದಿದ್ದೀ.</verse>
				<verse number="21">ಅತ್ಯುತ್ತಮ ಬೀಜದಿಂದ ಬೆಳೆದ ಉತ್ಕೃಷ್ಟ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷಿಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?</verse>
				<verse number="22">ನೀನು ಸಾಬೂನಿನಿಂದ ತೊಳೆದುಕೊಂಡರೂ, ಬಹಳ ಸಾಬೂನು ಹಾಕಿಕೊಂಡರೂ ನಿನ್ನ ಅಕ್ರಮವು ನನ್ನ ಮುಂದೆ ಕಳಂಕವಾಗಿದೆ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="23">“ಇದಲ್ಲದೆ ನೀನು, ‘ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ,’ ಎಂದು ಹೇಳುವುದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು. ನೀನು ಮಾಡಿದ್ದನ್ನು ತಿಳಿದುಕೋ. ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ.</verse>
				<verse number="24">ಮರುಭೂಮಿಯ ಅಭ್ಯಾಸವುಳ್ಳ ಕಾಡುಕತ್ತೆಯೇ. ಅವಳ ಅತ್ಯಾಶೆಯಲ್ಲಿ ಗಾಳಿಯನ್ನು ಹೀರಿಕೊಳ್ಳುತ್ತಾಳೆ. ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವರೆಲ್ಲರೂ ಆಯಾಸ ಪಡುವುದಿಲ್ಲ. ಅವಳ ಸಂಗಮಿಸುವ ಋತುಗಳಲ್ಲಿ ಅವಳನ್ನು ಕಾಣುವರು.</verse>
				<verse number="25">ಆದರೆ ನಾನು, ‘ನಿನ್ನ ಕಾಲು ಸವೆಯದಂತೆಯೂ, ನಿನ್ನ ಗಂಟಲು ಆರದಂತೆಯೂ ತಡೆದುಕೋ,’ ಎಂದೆನು. ಆದರೆ ನೀನು, ‘ಇಲ್ಲ, ನಿರೀಕ್ಷೆ ಇಲ್ಲ, ನಾನು ಅನ್ಯದೇವರುಗಳನ್ನು ಪ್ರೀತಿಸುತ್ತೇನೆ, ಅವುಗಳ ಹಿಂದೆ ನಾನು ಹೋಗುತ್ತೇನೆ,’ ಎಂದು ಹೇಳಿದೆ.</verse>
				<verse number="26">“ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ ಇಸ್ರಾಯೇಲ್ ಜನರಿಗೆ ನಾಚಿಕೆ ಆಯಿತು. ಅವರ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು, ಇವರೆಲ್ಲರೂ ನಾಚಿಕೆಗೆ ಈಡಾಗುವರು.</verse>
				<verse number="27">ಅವರು ಮರಕ್ಕೆ, ‘ನೀನು ನನ್ನ ತಂದೆ,’ ಎಂದೂ ಕಲ್ಲಿಗೆ, ‘ನೀನು ನನ್ನನ್ನು ಹೆತ್ತಿದ್ದೀ,’ ಎಂದೂ ಹೇಳುತ್ತಾರಲ್ಲಾ. ಏಕೆಂದರೆ ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ಅವರ ಕಷ್ಟಕಾಲದಲ್ಲಿ ಎದ್ದು, ‘ನಮ್ಮನ್ನು ರಕ್ಷಿಸು,’ ಎಂದು ಮೊರೆಯಿಡುವರು.</verse>
				<verse number="28">ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.</verse>
				<verse number="29">“ಏಕೆ ನನ್ನ ಸಂಗಡ ವಾದಿಸುತ್ತೀರಿ? ನೀವೆಲ್ಲರೂ ನನಗೆ ವಿರೋಧವಾಗಿ ದ್ರೋಹ ಮಾಡಿದ್ದೀರಿ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="30">“ನಾನು ನಿಮ್ಮ ಜನರನ್ನು ದಂಡಿಸಿದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ. ನಿಮ್ಮ ಸ್ವಂತ ಖಡ್ಗವು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.</verse>
				<verse number="31">“ಇಸ್ರಾಯೇಲರೇ, ನೀವು ಯೆಹೋವ ದೇವರ ವಾಕ್ಯವನ್ನು ಗಮನಿಸಿರಿ: “ನಾನು ಇಸ್ರಾಯೇಲಿನ ಮರುಭೂಮಿಯಾದೆನೋ? ಗಾಡಾಂಧಕಾರದ ದೇಶವಾದೆನೋ? ನನ್ನ ಜನರು, ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ, ನಾವು ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವುದಿಲ್ಲ,’ ಎಂದು ಹೇಳುವುದು ಹೇಗೆ?</verse>
				<verse number="32">ಯುವತಿಯು ತನ್ನ ಆಭರಣಗಳನ್ನೂ ಇಲ್ಲವೆ ಮದಲಗಿತ್ತಿ ತನ್ನ ಒಡ್ಯಾಣವನ್ನು ಮರೆತುಬಿಡುವಳೋ? ಆದರೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.</verse>
				<verse number="33">ಪ್ರಿಯಕರರನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಏಕೆ ಚಂದ ಮಾಡಿಕೊಳ್ಳುತ್ತೀ? ಇದರಿಂದ ಕೆಟ್ಟ ಹೆಂಗಸರಿಗೂ ನಿನ್ನ ಮಾರ್ಗವನ್ನು ಕಲಿಸಿದ್ದೀ.</verse>
				<verse number="34">ಇದಲ್ಲದೆ ನಿನ್ನ ಸೆರಗುಗಳಲ್ಲಿ ಅಪರಾಧವಿಲ್ಲದ ಬಡವರ ರಕ್ತವು ಸಿಕ್ಕಿದೆ. ಅಂತರಂಗದ ಶೋಧನೆಯಿಂದಲ್ಲ, ಆದರೆ ಇವರೆಲ್ಲರ ಮೇಲೆಯೇ ಅದನ್ನು ಕಂಡಿದ್ದೀ.</verse>
				<verse number="35">ಆದರೂ ನೀನು, ‘ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ದೇವರ ಕೋಪವು ನನ್ನನ್ನು ಬಿಟ್ಟು ತಿರುಗುವುದು,’ ಎಂದು ಹೇಳುತ್ತೀ. ನೀನು, ‘ನಾನು ಪಾಪಮಾಡಲಿಲ್ಲ’ ಎಂದು ಹೇಳುವುದರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.</verse>
				<verse number="36">ನಿನ್ನ ಮಾರ್ಗವನ್ನು ಬೇರೆ ಮಾಡಿಕೊಳ್ಳುವಷ್ಟು ಏಕೆ ಬಹಳವಾಗಿ ತಿರುಗಾಡುತ್ತೀ? ಅಸ್ಸೀರಿಯದ ನಿಮಿತ್ತ ನಾಚಿಕೆ ಪಟ್ಟ ಹಾಗೆ ಈಜಿಪ್ಟಿನ ನಿಮಿತ್ತವೂ ನಾಚಿಕೆಪಡುವೆ.</verse>
				<verse number="37">ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟು ಹೋಗುವೆ. ಏಕೆಂದರೆ ಯೆಹೋವ ದೇವರು ನೀನು ಭರವಸೆ ಇಟ್ಟವುಗಳನ್ನು ತಿರಸ್ಕರಿಸಿದ್ದಾರೆ, ಅವುಗಳ ಮುಖಾಂತರ ನಿನ್ನ ಕಾರ್ಯ ಸಫಲವಾಗುವುದಿಲ್ಲ.”</verse>
			</chapter>
			<chapter number="3">
				<verse number="1">“ಒಬ್ಬನು ತನ್ನ ಹೆಂಡತಿಯನ್ನು ವಿಚ್ಛೇದನಮಾಡಿದರೆ, ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನ ಜೊತೆ ಇದ್ದರೆ, ಅವನು ಅವಳನ್ನು ಮತ್ತೆ ಸೇರಿಸಿಕೊಳ್ಳುವನೋ? ಸೇರಿಸಿಕೊಂಡರೆ, ಆ ದೇಶವು ಸಂಪೂರ್ಣವಾಗಿ ಅಪವಿತ್ರವಾಗುವುದಿಲ್ಲವೋ? ಆದರೆ ನೀನು ನಿನ್ನ ಅನೇಕ ಪ್ರೇಮಿಗಳ ಸಂಗಡ ವೇಶ್ಯೆಯಂತೆ ಇದ್ದೀ. ನೀನು ಈಗ ನನ್ನ ಬಳಿಗೆ ಹಿಂತಿರುಗುವೆಯಾ?” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="2">“ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆ ಎತ್ತು. ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? ಮರುಭೂಮಿಯಲ್ಲಿ ಅರಬೀಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ. ಹೀಗೆ ನಿನ್ನ ವೇಶ್ಯೆತನಗಳಿಂದಲೂ, ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀಯೆ.</verse>
				<verse number="3">ಆದ್ದರಿಂದ ಮಳೆಗಳು ನಿಂತುಹೋದವು, ಹಿಂಗಾರೇ ಆಗಲಿಲ್ಲ. ವೇಶ್ಯೆಯ ನೋಟ ನಿನಗಿತ್ತು. ನಾಚುವುದನ್ನು ನಿರಾಕರಿಸಿದೆ.</verse>
				<verse number="4">ಈಗಲೂ ನನಗೆ, ‘ನನ್ನ ತಂದೆಯೇ, ನನ್ನ ಯೌವನದ ಸ್ನೇಹಿತನು ನೀನೇ,’ ಎಂದು ನೀನು ಕರೆಯುತ್ತಿರುವೆ.</verse>
				<verse number="5">ಆತನು ನಿತ್ಯ ಕೋಪಮಾಡುವವನೋ? ಕೊನೆಯ ತನಕ ಕೋಪವನ್ನು ಇಟ್ಟುಕೊಳ್ಳುವನೋ? ಇಗೋ, ನೀನು ಹೀಗೆ ಮಾತನಾಡಿದರೇನು? ಆದರೆ ನಿನ್ನಿಂದ ಸಾಧ್ಯವಾಗುವಷ್ಟು ದುಷ್ಕೃತ್ಯಗಳನ್ನು ಮಾಡಿದ್ದಿ.”</verse>
				<verse number="6">ಯೆಹೋವ ದೇವರು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೀನು ನೋಡಿದೆಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೆಯೂ ಹೋಗಿ, ಅಲ್ಲಿ ವೇಶ್ಯೆತನ ಮಾಡಿದ್ದಾಳೆ.</verse>
				<verse number="7">ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು ನನ್ನ ಬಳಿಗೆ ತಿರುಗಿಕೋ ಎಂದೆನು. ಆದರೆ ಅವಳು ತಿರುಗಿಕೊಳ್ಳಲಿಲ್ಲ. ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು.</verse>
				<verse number="8">ಆಗ ನಾನು ಕಂಡದ್ದೇನೆಂದರೆ, ಭ್ರಷ್ಟಳಾದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು, ತ್ಯಾಗ ಪತ್ರವನ್ನು ಕೊಟ್ಟಿದ್ದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಭಯಪಡದೆ, ತಾನು ಕೂಡ ಹೋಗಿ ವೇಶ್ಯೆತನ ಮಾಡಿದಳು.</verse>
				<verse number="9">ಆದದ್ದೇನೆಂದರೆ, ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ, ಕಲ್ಲುಗಳ ಮತ್ತು ಮರಗಳ ಸಂಗಡ ವ್ಯಭಿಚಾರ ಮಾಡಿದಳು.</verse>
				<verse number="10">ಇದೆಲ್ಲಾ ಆದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಪೂರ್ಣಹೃದಯದಿಂದಲ್ಲ, ಕಪಟದಿಂದಲೇ ನನ್ನ ಬಳಿಗೆ ತಿರುಗಿಕೊಂಡಿದ್ದಾಳೆ,” ಎಂದು ಯೆಹೋವ ದೇವರು ನುಡಿಯುತ್ತಾರೆ.</verse>
				<verse number="11">ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲ್, ದ್ರೋಹಿಯಾದ ಯೆಹೂದಕ್ಕಿಂತಲೂ ಶಿಷ್ಟಳಾಗಿ ಕಂಡುಬಂದಿದ್ದಾಳೆ.</verse>
				<verse number="12">ನೀನು ಹೋಗಿ ಉತ್ತರ ದಿಕ್ಕಿಗೆ ಈ ಮಾತುಗಳನ್ನು ಸಾರು. “ ‘ಭ್ರಷ್ಟಳಾದ ಇಸ್ರಾಯೇಲೇ, ತಿರುಗಿಕೋ,’ ಎಂದು ಯೆಹೋವ ದೇವರು ಕರೆಯುತ್ತಾರೆ. ‘ನಾನು ನನ್ನ ಕೋಪವನ್ನು ನಿಮ್ಮ ಮೇಲೆ ಬೀಳ ಮಾಡುವುದಿಲ್ಲ. ಏಕೆಂದರೆ ನಾನು ಕರುಣಾಸಾಗರನು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಾನು ಎಂದೆಂದಿಗೂ ಕೋಪವಿಟ್ಟುಕೊಳ್ಳುವುದಿಲ್ಲ.</verse>
				<verse number="13">ನಿನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡಿ, ಒಂದೊಂದು ಹಸುರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯ ದೇವರುಗಳಿಗೆ ಚದರಿಸಿ, ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆ ಮಾಡು,’ ” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="14">“ಓ ಭ್ರಷ್ಟರಾದ ಜನರೇ, ತಿರುಗಿಕೊಳ್ಳಿರಿ,” ಎಂದು ಯೆಹೋವ ದೇವರು ನುಡಿಯುತ್ತಾರೆ. “ಏಕೆಂದರೆ, ನಾನು ನಿಮಗೆ ಪತಿ. ಪಟ್ಟಣದೊಳಗಿಂದ ಒಬ್ಬನನ್ನು, ಗೋತ್ರದೊಳಗಿಂದ ಇಬ್ಬರನ್ನು ತೆಗೆದುಕೊಂಡು, ಚೀಯೋನಿಗೆ ಕರೆದುಕೊಂಡು ಬರುವೆನು.</verse>
				<verse number="15">ನನ್ನ ಹೃದಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು. ಅವರು ತಿಳುವಳಿಕೆಯಿಂದಲೂ, ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು.</verse>
				<verse number="16">ನೀವು ದೇಶದಲ್ಲಿ ಅಭಿವೃದ್ಧಿಯಾಗಿ ಫಲವುಳ್ಳವರಾದ ಮೇಲೆ ಆ ದಿವಸಗಳಲ್ಲಿ, ‘ಯೆಹೋವ ದೇವರ ಒಡಂಬಡಿಕೆಯ ಮಂಜೂಷವು,’ ಎಂದು ಇನ್ನು ಮೇಲೆ ಅವರು ಹೇಳದಿರುವರು. ಅದು ಮನಸ್ಸಿಗೆ ಬರುವುದಿಲ್ಲ, ಯಾರು ಅದನ್ನು ಸ್ಮರಿಸುವುದಿಲ್ಲ, ಅದರ ಬಗ್ಗೆ ವಿಚಾರಿಸುವುದೂ ಇಲ್ಲ; ಇನ್ನು ಮೇಲೆ ಸರಿಯಾಗುವುದಿಲ್ಲ ಎಂದು ಯೆಹೋವ ದೇವರು ನುಡಿಯುತ್ತಾರೆ.</verse>
				<verse number="17">ಆ ಕಾಲ ಬಂದಾಗ ಯೆರೂಸಲೇಮನ್ನೇ, ‘ಯೆಹೋವ ದೇವರ ಸಿಂಹಾಸನ,’ ಎಂದು ಕರೆಯುವರು. ನನ್ನ ನಾಮ ಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದು ಬರುವರು. ಆಮೇಲೆ ತಮ್ಮ ದುಷ್ಟ ಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು.</verse>
				<verse number="18">ಆ ಕಾಲದಲ್ಲಿ ಯೆಹೂದದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತಗಳನ್ನು ಬಿಟ್ಟು, ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.”</verse>
				<verse number="19">ಯೆಹೋವ ದೇವರು ಹೇಳುವುದೇನೆಂದರೆ: “ಎಲೈ ಇಸ್ರಾಯೇಲ್, ನಾನು ಎಷ್ಟೋ ಸಂತೋಷದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು ಎಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು, ‘ತಂದೆ,’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆ ಎಂದಿದ್ದೆ.</verse>
				<verse number="20">ನಿಶ್ಚಯವಾಗಿ ಹೆಂಡತಿ ತನ್ನ ಗಂಡನನ್ನು ವಂಚಿಸಿಬಿಡುವ ಕಾರಣ, ಓ ಇಸ್ರಾಯೇಲಿನ ಮನೆತನದವರೇ, ನನಗೆ ವಂಚನೆ ಮಾಡಿದ್ದೀರಿ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="21">ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಿತು. ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿಕೆಗಳೇ. ಏಕೆಂದರೆ ಅವರು ತಮ್ಮ ಮಾರ್ಗವನ್ನು ಡೊಂಕು ಮಾಡಿ, ತಮ್ಮ ದೇವರಾದ ಯೆಹೋವ ದೇವರನ್ನು ಮರೆತುಬಿಟ್ಟಿದ್ದರು.</verse>
				<verse number="22">“ಭ್ರಷ್ಟರಾದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಭ್ರಷ್ಟತನವನ್ನು ನಾನು ಸ್ವಸ್ಥ ಮಾಡುವೆನು.” “ಇಗೋ, ನಿಮ್ಮ ಬಳಿಗೆ ಬರುತ್ತೇವೆ, ಏಕೆಂದರೆ ನೀವು ಯೆಹೋವ ದೇವರು, ನಮ್ಮ ದೇವರಾಗಿದ್ದೀರಿ.</verse>
				<verse number="23">ನಿಶ್ಚಯವಾಗಿ ಗುಡ್ಡಗಳಿಂದಲೂ, ಬೆಟ್ಟಗಳ ಸಮೂಹದಿಂದಲೂ ನಮಗೆ ಮೋಸವಾಗಿದೆ. ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವ ದೇವರಲ್ಲಿಯೇ ಇದೆ.</verse>
				<verse number="24">ನಾಚಿಕೆಯಾದದ್ದು, ನಮ್ಮ ಚಿಕ್ಕತನದಿಂದ ನಮ್ಮ ತಂದೆಗಳ ಕಷ್ಟವನ್ನೂ, ಅವರ ಕುರಿಗಳನ್ನೂ, ಅವರ ದನಗಳನ್ನೂ, ಅವರ ಪುತ್ರರನ್ನೂ, ಅವರ ಪುತ್ರಿಯರನ್ನೂ ತಿಂದುಬಿಟ್ಟಿದೆ.</verse>
				<verse number="25">ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ. ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ. ಏಕೆಂದರೆ ನಾವೂ, ನಮ್ಮ ಪೂರ್ವಜರೂ ನಮ್ಮ ಚಿಕ್ಕತನದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ. ನಮ್ಮ ಯೆಹೋವ ದೇವರ ಸ್ವರಕ್ಕೆ ಕಿವಿಗೊಡಲಿಲ್ಲ.”</verse>
			</chapter>
			<chapter number="4">
				<verse number="1">“ಇಸ್ರಾಯೇಲೇ, ನೀನು ಹಿಂದಿರುಗುವಿಯಾದರೆ ನನ್ನ ಕಡೆ ಹಿಂದಿರುಗಿ ಬಾ,” ಎಂದು ಯೆಹೋವ ದೇವರು ನುಡಿಯುತ್ತಾರೆ. “ನೀನು ನಿನ್ನ ಅಸಹ್ಯಗಳನ್ನು ನನ್ನ ಎದುರಿನಿಂದ ತೆಗೆದುಬಿಟ್ಟರೆ, ಅಲೆದಾಡದೆ ಇರುವೆ.</verse>
				<verse number="2">ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿಯಿಂದಲೂ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡುವೆ. ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯ ಬಯಸುವರು. ನನ್ನಲ್ಲಿಯೇ ಹೆಮ್ಮೆಪಡುವರು.”</verse>
				<verse number="3">ಏಕೆಂದರೆ ಯೆಹೋವ ದೇವರು ಯೆಹೂದದ ಮತ್ತು ಯೆರೂಸಲೇಮಿನ ಜನರಿಗೆ ಹೀಗೆ ಹೇಳುತ್ತಾರೆ: “ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಗೆಯ್ಯಿರಿ. ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.</verse>
				<verse number="4">ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ; ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲದಿದ್ದರೆ ನನ್ನ ಉಗ್ರವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.”</verse>
				<verse number="5">“ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸಲೇಮಿನಲ್ಲಿ ಪ್ರಕಟಿಸಿರಿ, ‘ಇಡೀ ದೇಶದಲ್ಲಿ ತುತೂರಿ ಊದಿರಿ!’ ಎಂದು ಹೇಳಿರಿ. ಗಟ್ಟಿಯಾಗಿ ಹೀಗೆ ಕೂಗಿರಿ, ‘ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ!’ ಎಂದು ಹೇಳಿರಿ.</verse>
				<verse number="6">ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ವಿಳಂಬವಿಲ್ಲದೆ ಸುರಕ್ಷತೆಗಾಗಿ ಓಡಿಹೋಗಿರಿ. ಏಕೆಂದರೆ ನಾನು ಉತ್ತರದಿಂದ ಕೇಡನ್ನೂ, ದೊಡ್ಡ ನಾಶವನ್ನೂ ತರುತ್ತೇನೆ.”</verse>
				<verse number="7">ಸಿಂಹವು ತನ್ನ ಪೊದೆಯೊಳಗಿಂದ ಏರಿ ಬರುತ್ತದೆ. ಇತರ ಜನಾಂಗಗಳನ್ನು ನಾಶ ಮಾಡುವವನು ಹೊರಟಿದ್ದಾನೆ. ನಿನ್ನ ದೇಶವನ್ನು ಹಾಳು ಮಾಡುವುದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ. ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವುದು.</verse>
				<verse number="8">ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ. ಪ್ರಲಾಪಿಸಿರಿ, ಗೋಳಾಡಿರಿ. ಯೆಹೋವ ದೇವರ ಉಗ್ರಕೋಪದ ಉರಿಯು ನಮ್ಮಿಂದ ಹಿಂದಿರುಗಲಿಲ್ಲ.</verse>
				<verse number="9">ಆ ದಿವಸದಲ್ಲಿ, “ಅರಸನ ಹೃದಯವೂ ಎದೆಗುಂದುವುದು. ಅಧಿಪತಿಯ ಹೃದಯವೂ ಕುಗ್ಗುವುದು. ಯಾಜಕರು ಭ್ರಮೆಗೊಳ್ಳುವರು. ಪ್ರವಾದಿಗಳು ಸ್ತಬ್ಧರಾಗುವರು,” ಎಂದು ಯೆಹೋವ ದೇವರು ನುಡಿಯುತ್ತಾರೆ.</verse>
				<verse number="10">ಆಗ ನಾನು ಹೇಳಿದ್ದೇನೆಂದರೆ, “ಹಾ, ಸಾರ್ವಭೌಮ ಯೆಹೋವ ದೇವರೇ, ನಿಶ್ಚಯವಾಗಿ ನೀವು ಈ ಜನರಿಗೂ, ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು,’ ಎಂದು ಹೇಳಿ, ಬಹಳ ಮೋಸ ಮಾಡಿದಿರಿ. ಖಡ್ಗವು ಅವರ ಕುತ್ತಿಗೆಗೆ ಬಂದಿದೆ” ಎಂದೆನು.</verse>
				<verse number="11">ಆ ಸಮಯದಲ್ಲಿ ಈ ಜನರಿಗೂ, ಯೆರೂಸಲೇಮಿಗೂ ಈ ಮಾತುಗಳನ್ನು ತಿಳಿಸಲಾಗುವುದು: “ಒಣ ಗಾಳಿಯು ಮರುಭೂಮಿಯ ಉನ್ನತ ಸ್ಥಳಗಳಿಂದ ನನ್ನ ಜನರ ಪುತ್ರಿಯರ ಕಡೆಗೆ ಬರುತ್ತದೆ. ಅದು ತೂರುವುದಕ್ಕೂ, ಶುದ್ಧಮಾಡುವುದಕ್ಕೂ ಆಗತಕ್ಕದ್ದಲ್ಲ.</verse>
				<verse number="12">ಅದಕ್ಕಿಂತ ಬಿರುಸಾದ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವುದು. ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯತೀರ್ಪುಗಳನ್ನು ಕೊಡುವೆನು.”</verse>
				<verse number="13">ಇಗೋ, ಮೇಘಗಳ ಹಾಗೆ ಏರಿ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವುವು. ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮ್ಮ ಗತಿಯನ್ನು ಏನು ಹೇಳೋಣ, ಏಕೆಂದರೆ ಹಾಳಾದೆವು.</verse>
				<verse number="14">ಯೆರೂಸಲೇಮೇ, ನಿನಗೆ ರಕ್ಷಣೆಯಾಗುವ ಹಾಗೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರವರೆಗೆ ನಿನ್ನಲ್ಲಿ ತಂಗುವುವು.</verse>
				<verse number="15">ಏಕೆಂದರೆ ಒಂದು ಶಬ್ದವು ದಾನಿನಿಂದ ಪ್ರಕಟಮಾಡುತ್ತದೆ; ಎಫ್ರಾಯೀಮಿನ ಬೆಟ್ಟದಿಂದ ಆಪತ್ತನ್ನು ತಿಳಿಯಪಡಿಸುತ್ತದೆ.</verse>
				<verse number="16">“ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯಪಡಿಸಿರಿ. ಏನೆಂದರೆ, ‘ಮುತ್ತಿಗೆ ಹಾಕುವ ಸೈನ್ಯದವರು ದೂರದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ಯುದ್ಧದ ಕೂಗನ್ನು ಎಬ್ಬಿಸುತ್ತಾರೆ.</verse>
				<verse number="17">ಹೊಲ ಕಾಯುವವರಂತೆ ಸುತ್ತಲಾಗಿ ಅವಳಿಗೆ ವಿರೋಧವಾಗಿದ್ದಾರೆ. ಏಕೆಂದರೆ ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾಳೆಂದು,’ ” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="18">“ನಿನ್ನ ಮಾರ್ಗವೂ, ನಿನ್ನ ಕ್ರಿಯೆಗಳೂ, ಇವುಗಳನ್ನು ನಿನಗೆ ಉಂಟುಮಾಡಿದವು, ಇದೇ ನಿನ್ನ ಶಿಕ್ಷೆ. ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ನಾಟುವುದಿಲ್ಲವೋ?”</verse>
				<verse number="19">ಓ, ನನ್ನ ಕರುಳು, ನನ್ನ ಕರುಳು! ನಾನು ನೋವಿನಿಂದ ನರಳುತ್ತೇನೆ. ನನ್ನ ಹೃದಯವು ನನ್ನಲ್ಲಿ ತಳಮಳಗೊಂಡಿದೆ. ನಾನು ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿ ಶಬ್ದವನ್ನೂ, ಯುದ್ಧದ ಆರ್ಭಟವನ್ನೂ ಕೇಳುತ್ತಿರುವೆ.</verse>
				<verse number="20">ನಾಶನದ ಮೇಲೆ ನಾಶನದ ಸುದ್ದಿಬರುತ್ತಿದೆ. ದೇಶವೆಲ್ಲಾ ಹಾಳಾಯಿತು. ಫಕ್ಕನೆ ನನ್ನ ಗುಡಾರಗಳೂ, ಕ್ಷಣಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು.</verse>
				<verse number="21">ಎಷ್ಟರವರೆಗೆ ನಾನು ಯುದ್ಧದ ಧ್ವಜವನ್ನು ನೋಡುತ್ತಿರಲಿ? ತುತೂರಿಯ ಶಬ್ದವನ್ನು ಎಷ್ಟರವರೆಗೆ ನಾನು ಕೇಳಲಿ?</verse>
				<verse number="22">“ಏಕೆಂದರೆ ನನ್ನ ಜನರು ಮೂಢರಾಗಿದ್ದಾರೆ. ನನ್ನನ್ನು ಅವರು ಅರಿಯರು; ಮೂರ್ಖ ಮಕ್ಕಳಾಗಿದ್ದಾರೆ, ಅವರು ಗ್ರಹಿಕೆಯಿಲ್ಲದವರು; ಕೆಟ್ಟದ್ದನ್ನು ಮಾಡುವುದಕ್ಕೆ ಜಾಣರಾಗಿದ್ದಾರೆ, ಆದರೆ ಒಳ್ಳೆಯದನ್ನು ಮಾಡುವುದಕ್ಕೆ ಅರಿಯರು.”</verse>
				<verse number="23">ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ, ಹಾಳಾಗಿಯೂ, ಶೂನ್ಯವಾಗಿಯೂ ಇತ್ತು. ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ.</verse>
				<verse number="24">ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹಗುರವಾಗಿ ಅದುರಿದವು.</verse>
				<verse number="25">ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿ ಹೋಗಿದ್ದವು.</verse>
				<verse number="26">ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಮರುಭೂಮಿಯಾಯಿತು; ಅದರ ಪಟ್ಟಣಗಳೆಲ್ಲಾ ಯೆಹೋವ ದೇವರ ಮುಂದೆಯೂ, ಅವರ ಉಗ್ರಕೋಪದ ಉರಿಯ ಮುಂದೆಯೂ ಬಿದ್ದು ಹೋಗಿದ್ದವು.</verse>
				<verse number="27">ಏಕೆಂದರೆ ಯೆಹೋವ ದೇವರು ಹೀಗೆ ಹೇಳಿದ್ದಾರೆ: “ದೇಶವೆಲ್ಲಾ ಹಾಳಾಗುವುದು. ಆದರೂ ನಾನು ಅದನ್ನು ಪೂರ್ಣ ನಾಶ ಮಾಡಿಲ್ಲ.</verse>
				<verse number="28">ಇದರ ನಿಮಿತ್ತ ಭೂಮಿಯು ದುಃಖಿಸುವುದು. ಮೇಲಿರುವ ಆಕಾಶವು ಕಪ್ಪಾಗುವುದು. ಏಕೆಂದರೆ ನಾನು ಅದನ್ನು ಹೇಳಿದ್ದರಿಂದ ನಿಶ್ಚಯಿಸಿದ್ದೇನೆ. ಮಾನಸಾಂತರ ಪಡುವುದಿಲ್ಲ. ಇಲ್ಲವೆ ಅದರಿಂದ ಹಿಂದಿರುಗುವುದಿಲ್ಲ.”</verse>
				<verse number="29">ರಾವುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವುದು. ಪೊದೆಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು. ಪಟ್ಟಣಗಳೆಲ್ಲಾ ನಾಶವಾಗುವುವು. ಅವುಗಳಲ್ಲಿ ಒಬ್ಬನಾದರೂ ವಾಸಮಾಡನು.</verse>
				<verse number="30">ಆಗ ನೀನು ನಿರ್ಜನನಾದಾಗ ಏನು ಮಾಡುವೆ? ನೀನು ಕಡುಕೆಂಪು ಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡರೇನು? ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು? ನೀವು ವ್ಯರ್ಥವಾಗಿ ನಿನ್ನನ್ನು ಅಲಂಕರಿಸಿಕೊಳ್ಳುತ್ತಿ. ನಿನ್ನ ಪ್ರೇಮಿಗಳು ನಿನ್ನನ್ನು ತಿರಸ್ಕರಿಸುತ್ತಾರೆ; ಅವರು ನಿನ್ನನ್ನು ಕೊಲ್ಲಲು ಬಯಸುತ್ತಾರೆ.</verse>
				<verse number="31">ಏಕೆಂದರೆ ಪ್ರಸವವೇದನೆ ಪಡುವವಳಂತೆ, ಚೊಚ್ಚಲನ್ನು ಹೆರುವವಳ ಸಂಕಟಕ್ಕೆ ಸಮಾನವಾಗಿರುವ ಚೀಯೋನಿನ ಮಗಳ ಕಿರಿಚುವ ಕೂಗನ್ನು ಕೇಳಿದ್ದೇನೆ. ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ, “ಅಯ್ಯೋ, ನನಗೀಗ ಕಷ್ಟ! ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ,” ಎಂದು ಅರಚಿಕೊಳ್ಳುತ್ತಾಳೆ.</verse>
			</chapter>
			<chapter number="5">
				<verse number="1">“ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ, ನ್ಯಾಯವನ್ನು ಮಾಡುವವನೂ, ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ, ತಿಳಿದು ಹುಡುಕಿರಿ; ಸಿಕ್ಕಿದರೆ ಅವಳಿಗೆ ಮನ್ನಿಸುವೆನು.</verse>
				<verse number="2">ಅವರು, ‘ಯೆಹೋವ ದೇವರು ಜೀವದಾಣೆ,’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳಾಗಿಯೇ ಇರುತ್ತದೆ.”</verse>
				<verse number="3">ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ? ಅವರನ್ನು ಹೊಡೆದಿರಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ತುಳಿದಿರಿ, ಆದರೆ ತಿದ್ದುಕೊಳ್ಳಲು ಒಪ್ಪಲಿಲ್ಲ. ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ. ಅವರು ಪಶ್ಚಾತ್ತಾಪಕ್ಕೆ ನಿರಾಕರಿಸಿದ್ದಾರೆ.</verse>
				<verse number="4">ಆದ್ದರಿಂದ ನಾನು, “ನಿಶ್ಚಯವಾಗಿ ಇವರು ಬಡವರು ಮತ್ತು ಬುದ್ಧಿಹೀನರು. ಏಕೆಂದರೆ, ಯೆಹೋವ ದೇವರ ಮಾರ್ಗವನ್ನೂ ತಮ್ಮ ದೇವರ ನ್ಯಾಯವಿಧಿಗಳನ್ನೂ ಅರಿಯರು.</verse>
				<verse number="5">ನಾನು ನಾಯಕರ ಬಳಿಗೆ ಹೋಗಿ, ಅವರ ಸಂಗಡ ಮಾತನಾಡುವೆನು. ಏಕೆಂದರೆ, ಅವರು ಯೆಹೋವ ದೇವರ ಮಾರ್ಗವನ್ನೂ ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿದಿದ್ದಾರೆ,” ಆದರೆ ಇವರು ಕೂಡ ಒಮ್ಮತವಾಗಿ ನೊಗವನ್ನು ಮುರಿದು, ಬಂಧನಗಳನ್ನು ಹರಿದುಬಿಟ್ಟಿದ್ದಾರೆ.</verse>
				<verse number="6">ಹೀಗಿರುವುದರಿಂದ ಅಡವಿಯ ಸಿಂಹವು ಅವರನ್ನು ದಾಳಿಮಾಡುವುದು. ಕಾಡಿನ ತೋಳವು ಅವರನ್ನು ಸೂರೆಮಾಡುವುದು. ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವುದು. ಅಲ್ಲಿಂದ ಹೊರಗೆ ಬರುವವರೆಲ್ಲರೂ ಸೀಳಲಾಗುವರು. ಏಕೆಂದರೆ, ಅವರ ದ್ರೋಹಗಳು ಬಹಳವಾಗಿವೆ. ಅವರ ಹಿಂಜಾರುವಿಕೆಯು ಹೆಚ್ಚಾಗಿವೆ.</verse>
				<verse number="7">ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ. ನಾನು ಅವರನ್ನು ತೃಪ್ತಿಪಡಿಸಿದ ಮೇಲೆ, ಅವರು ವ್ಯಭಿಚಾರ ಮಾಡಿದ್ದಾರೆ. ವೇಶ್ಯೆಯರ ಮನೆಗಳಲ್ಲಿ ಗುಂಪಾಗಿ ಸೇರಿದ್ದಾರೆ.</verse>
				<verse number="8">ಅವರು ಕುದುರೆಗಳಂತೆ, ಬಲಶಾಲಿ ಮತ್ತು ಕಾಮವನ್ನು ಹೊಂದಿದವರಾಗಿದ್ದಾರೆ. ತಮ್ಮ ತಮ್ಮ ನೆರೆಯವರ ಹೆಂಡತಿಯರನ್ನು ಕಂಡು ಹೇಕರಿಸುತ್ತಾರೆ.</verse>
				<verse number="9">ಇವುಗಳ ನಿಮಿತ್ತ ನಾನು ಶಿಕ್ಷಿಸಬಾರದೇ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ? ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="10">ಅವಳ ದ್ರಾಕ್ಷಿತೋಟಗಳ ಮೂಲಕ ಹೋಗಿ ಅವುಗಳನ್ನು ಹಾಳುಮಾಡಿರಿ. ಆದರೆ ಸಂಪೂರ್ಣವಾಗಿ ನಾಶಮಾಡಬೇಡಿರಿ. ಅದರ ರೆಂಬೆಗಳನ್ನು ತೆಗೆದುಹಾಕಿರಿ ಏಕೆಂದರೆ ಅವು ಯೆಹೋವ ದೇವರಿಗೆ ಸೇರಿದವುಗಳಲ್ಲ.</verse>
				<verse number="11">ಇಸ್ರಾಯೇಲನ ಮನೆತನದವರೂ, ಯೆಹೂದನ ಮನೆತನದವರೂ ನನಗೆ ಬಹಳ ವಂಚನೆ ಮಾಡಿದ್ದಾರೆ, ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="12">ಆ ಜನರು ಯೆಹೋವ ದೇವರನ್ನು ಅಲ್ಲಗಳೆದಿದ್ದಾರೆ. “ಆತ ಏನು ಮಾಡಿಯಾನು? ನಮಗೆ ಕೇಡು ಬರುವುದೂ ಇಲ್ಲ, ಖಡ್ಗವಾಗಲಿ, ಕ್ಷಾಮವಾಗಲಿ ನಮ್ಮ ಕಣ್ಣಿಗೆ ಬೀಳುವುದೂ ಇಲ್ಲ,</verse>
				<verse number="13">ಪ್ರವಾದಿಗಳು ಆಡುವುದೆಲ್ಲಾ ಬರೀ ಗಾಳಿ ಮಾತುಗಳು, ದೈವೋಕ್ತಿ ಎಂಬುದು ಅವುಗಳಲ್ಲಿ ಇಲ್ಲ, ಅವರು ಹೇಳುವುದೆಲ್ಲಾ ಅವರಿಗೇ ತಗಲಲಿ,” ಎಂದುಕೊಂಡಿದ್ದಾರೆ.</verse>
				<verse number="14">ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಯೆರೆಮೀಯನಿಗೆ ಹೀಗೆನ್ನುತ್ತಾರೆ: “ಇಗೋ, ಅವರು ಹೀಗೆ ಮಾತಾಡಿದ್ದರಿಂದ ನಿನ್ನ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಸುವೆನು, ಆ ಜನರನ್ನು ಅದಕ್ಕೆ ಸೌದೆಯನ್ನಾಗಿಸುವೆನು. ಆ ಬೆಂಕಿ ಅವರನ್ನು ಸುಟ್ಟುಹಾಕುವುದು.”</verse>
				<verse number="15">ಯೆಹೋವ ದೇವರು ಹೀಗೆ ಹೇಳುತ್ತಾರೆ, “ಓ ಇಸ್ರಾಯೇಲ ಮನೆತನವೇ, ನಾನು ದೂರದಿಂದ ನಿಮ್ಮ ಮೇಲೆ ಒಂದು ಜನಾಂಗವನ್ನು ತರಿಸುತ್ತೇನೆ. ಅದು ಬಲವಾದ ಜನಾಂಗವು. ಪೂರ್ವಕಾಲದ ಜನಾಂಗವು, ಆ ಜನಾಂಗದ ಭಾಷೆಯನ್ನು ನೀನರಿಯೆ; ಇಲ್ಲವೆ ಅವರು ಹೇಳುವಂಥದ್ದು ನಿನಗೆ ತಿಳಿಯದು.</verse>
				<verse number="16">ಅವರ ಬತ್ತಳಿಕೆ ತೆರೆದ ಸಮಾಧಿಯ ಹಾಗಿದೆ. ಅವರೆಲ್ಲರೂ ಪರಾಕ್ರಮಶಾಲಿಗಳೇ.</verse>
				<verse number="17">ನಿನ್ನ ಪುತ್ರರು, ನಿನ್ನ ಪುತ್ರಿಯರು ನಿನ್ನ ಪೈರನ್ನೂ, ನಿನ್ನ ರೊಟ್ಟಿಯನ್ನೂ ನುಂಗಿಬಿಡುವರು. ನಿನ್ನ ಕುರಿಗಳನ್ನೂ, ನಿನ್ನ ದನಗಳನ್ನೂ ನುಂಗಿಬಿಡುವರು. ನಿನ್ನ ದ್ರಾಕ್ಷಿ ಲತೆಗಳನ್ನೂ, ಅಂಜೂರದ ಗಿಡಗಳನ್ನೂ ನುಂಗಿಬಿಡುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.</verse>
				<verse number="18">“ಆದರೂ ಆ ದಿವಸಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ಅಳಿಸಿಬಿಡುವುದಿಲ್ಲ,” ಎಂದು ಯೆಹೋವ ದೇವರು ಅನ್ನುತ್ತಾರೆ.</verse>
				<verse number="19">“ ‘ನಮ್ಮ ದೇವರಾದ ಯೆಹೋವ ದೇವರು ನಮಗೆ ಯಾತಕ್ಕೆ ಇವುಗಳನ್ನೆಲ್ಲಾ ಮಾಡುತ್ತಾರೆ,’ ಎಂದು ನೀವು ಕೇಳುವಾಗ, ನೀನು ಅವರಿಗೆ ಹೀಗೆ ಹೇಳಬೇಕು: ‘ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ, ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ.’</verse>
				<verse number="20">“ಯಾಕೋಬ ವಂಶಜರಲ್ಲಿ ಇದನ್ನು ತಿಳಿಸಿರಿ. ಯೆಹೂದದಲ್ಲಿ ಪ್ರಕಟಿಸಿರಿ.</verse>
				<verse number="21">ಏನೆಂದರೆ, ಓ ಮೂಢ ಬುದ್ಧಿಹೀನ ಜನರೇ, ಕಣ್ಣುಗಳಿದ್ದು ಕಾಣದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.</verse>
				<verse number="22">ನೀವು ನನಗೆ ಭಯಪಡುವುದಿಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ಸಮ್ಮುಖದಲ್ಲಿ ನಡುಗುವುದಿಲ್ಲವೋ? ನಾನು ಮರಳನ್ನು ನಿತ್ಯ ನೇಮವಾಗಿ ಸಮುದ್ರಕ್ಕೆ, ಅದು ದಾಟಕೂಡದ ಹಾಗೆ ಮೇರೆಯಾಗಿಟ್ಟಿದ್ದೇನೆ. ಅದರ ತೆರೆಗಳು ಎದ್ದರೂ ದಡ ಮೀರಲಾರವು; ಘೋಷಿಸಿದರೂ ಅದನ್ನು ದಾಟಲಾರವು.</verse>
				<verse number="23">ಆದರೆ ಈ ಜನರಿಗೆ ತಿರುಗಿ ಬೀಳುವಂಥ, ಪ್ರತಿಭಟಿಸುವಂಥ ಹೃದಯ ಉಂಟು. ಅವರು ತಿರುಗಿಬಿದ್ದು ಹೋಗಿಬಿಟ್ಟಿದ್ದಾರೆ.</verse>
				<verse number="24">ತಮ್ಮ ಹೃದಯದಲ್ಲಿ, ‘ಮುಂಗಾರು ಹಿಂಗಾರು ಮಳೆಯನ್ನು ಅದರದರ ಕಾಲದಲ್ಲಿ ನಮಗೆ ಕೊಡುವಂಥ ಸುಗ್ಗಿಗೆ ನೇಮಕವಾದ ವಾರಗಳನ್ನು ನಮಗೆ ಪ್ರತ್ಯೇಕಿಸುವಂಥ ನಮ್ಮ ದೇವರಾದ ಯೆಹೋವ ದೇವರಿಗೆ ಭಯಪಡೋಣ,’ ಎಂದುಕೊಳ್ಳುವುದಿಲ್ಲ.</verse>
				<verse number="25">ನಿಮ್ಮ ಅಕ್ರಮಗಳು ಇವುಗಳನ್ನು ತಪ್ಪಿಸಿ ಇವೆ; ನಿಮ್ಮ ಪಾಪಗಳು ಒಳ್ಳೆಯವುಗಳನ್ನು ನಿಮ್ಮಿಂದ ಹಿಂದೆಗೆದಿವೆ.</verse>
				<verse number="26">“ಏಕೆಂದರೆ ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ. ಬೇಟೆಗಾರನ ಹಾಗೆ ಹೊಂಚುಹಾಕುತ್ತಾರೆ; ಪಕ್ಷಿಗಳನ್ನು ಬಲೆಗೆ ಬೀಳಿಸುವ ಮನುಷ್ಯರಂತೆ ಕಾಯುತ್ತಿದ್ದಾರೆ ಮತ್ತು ಜನರನ್ನು ಹಿಡಿಯಲು ಬಲೆ ಹಾಕುತ್ತಾರೆ.</verse>
				<verse number="27">ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ, ಅವರ ಮನೆಗಳು ಮೋಸದಿಂದ ತುಂಬಿವೆ. ಆದ್ದರಿಂದ ಅವರು ಶಕ್ತಿವಂತರೂ, ಐಶ್ವರ್ಯವಂತರೂ ಆಗಿದ್ದಾರೆ.</verse>
				<verse number="28">ಅವರು ಕೊಬ್ಬಿದ್ದಾರೆ ಮತ್ತು ನಯವಾಗಿ ಬೆಳೆದಿದ್ದಾರೆ. ಅವರ ಕೆಟ್ಟ ಕೆಲಸಗಳಿಗೆ ಮಿತಿಯಿಲ್ಲ; ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವುದಿಲ್ಲ; ಆದರೂ ಅವರು ಸಫಲವಾಗುತ್ತಾರೆ, ಬಡವರ ನ್ಯಾಯವನ್ನು ತೀರಿಸರು.</verse>
				<verse number="29">ಇವುಗಳ ನಿಮಿತ್ತ ನಾನು ದಂಡಿಸಬಾರದೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ?</verse>
				<verse number="30">“ಭಯಂಕರವಾದ ಮತ್ತು ಆಶ್ಚರ್ಯವಾದ ಕಾರ್ಯವು ದೇಶದಲ್ಲಿ ನಡೆಯುತ್ತದೆ.</verse>
				<verse number="31">ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?</verse>
			</chapter>
			<chapter number="6">
				<verse number="1">“ಓ ಬೆನ್ಯಾಮೀನನ ಮಕ್ಕಳೇ! ನಿಮ್ಮ ಸುರಕ್ಷತೆಗಾಗಿ ಯೆರೂಸಲೇಮಿನಿಂದ ಓಡಿಹೋಗಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಕೇಡೂ ದೊಡ್ಡ ನಾಶವೂ ಉತ್ತರದ ಕಡೆಯಿಂದ ತೋರುತ್ತವೆ.</verse>
				<verse number="2">ಸುಂದರಿ ಮತ್ತು ಕೋಮಲಳಾದ ಚೀಯೋನಿನ ಮಗಳನ್ನು ನಾನು ನಾಶಮಾಡುತ್ತೇನೆ.</verse>
				<verse number="3">ಕುರುಬರು ತಮ್ಮ ಮಂದೆಗಳ ಸಂಗಡ ಅವಳ ವಿರುದ್ಧ ಬರುವರು. ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು. ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.”</verse>
				<verse number="4">“ಚೀಯೋನಿಗೆ ವಿರೋಧವಾಗಿ ಯುದ್ಧವನ್ನು ಸಿದ್ಧಮಾಡಿರಿ. ಏಳಿರಿ, ಮಧ್ಯಾಹ್ನದಲ್ಲಿ ದಾಳಿಮಾಡೋಣ. ನಮಗೆ ಕಷ್ಟ! ಏಕೆಂದರೆ ಹೊತ್ತು ಮುಳುಗುತ್ತದೆ; ಸಂಜೆಯ ನೆರಳುಗಳು ಉದ್ದವಾಗುತ್ತವೆ.</verse>
				<verse number="5">ಏಳಿರಿ, ರಾತ್ರಿಯಲ್ಲಿ ದಾಳಿಮಾಡೋಣ. ಅವಳ ಕೋಟೆಗಳನ್ನು ನಾಶಮಾಡೋಣ.”</verse>
				<verse number="6">ಏಕೆಂದರೆ, ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಚೀಯೋನ್ ಸುತ್ತಲಿರುವ ಮರಗಳನ್ನು ಕಡಿಯಿರಿ. ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ. ಇದೇ ನೀವು ದಂಡಿಸತಕ್ಕ ಪಟ್ಟಣವು. ಅವಳಲ್ಲಿ ಬರೀ ದಬ್ಬಾಳಿಕೆಯೇ ತುಂಬಿದೆ.</verse>
				<verse number="7">ಬುಗ್ಗೆಯು ನೀರನ್ನು ಹರಿಯ ಮಾಡುವಂತೆ, ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ. ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳ ಬರುತ್ತದೆ. ದುಃಖವೂ ಗಾಯಗಳೂ ಯಾವಾಗಲೂ ನನ್ನ ಮುಂದೆ ಇವೆ.</verse>
				<verse number="8">ಓ ಯೆರೂಸಲೇಮೇ, ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ, ನಾನು ನಿಮ್ಮನ್ನು ಹಾಳಾಗಿಯೂ, ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತೆಗೆದುಕೋ.”</verse>
				<verse number="9">ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಸ್ರಾಯೇಲಿನ ಶೇಷವನ್ನು ದ್ರಾಕ್ಷಿ ಗಿಡದ ಹಾಗೆ ಪೂರ್ಣವಾಗಿ ಹಕ್ಕಲಾಯುವರು; ದ್ರಾಕ್ಷಿ ಕೂಡಿಸುವವನ ಹಾಗೆ ನಿನ್ನ ಕೈಯನ್ನು ರೆಂಬೆಗಳಲ್ಲಿ ಹಿಂದಕ್ಕೆ ತಿರುಗಿಸು.”</verse>
				<verse number="10">ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಮುಚ್ಚಿಹೋಗಿವೆ. ಇಗೋ, ಯೆಹೋವ ದೇವರ ವಾಕ್ಯವು ಅವನಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.</verse>
				<verse number="11">ಆದ್ದರಿಂದ ಯೆಹೋವ ದೇವರ ಕೋಪದಿಂದ ನಾನು ತುಂಬಿದ್ದೇನೆ. ಅದನ್ನು ನನ್ನೊಳಗೆ ಹಿಡಿಯುವುದು ನನಗೆ ಸಾಕಾಯಿತು. “ಅದನ್ನು ದೂರ ಇರುವ ಮಕ್ಕಳ ಮೇಲೆ ಮತ್ತು ಯೌವನಸ್ಥರ ಕೂಟ ಸಹಿತವಾಗಿ ಅವರ ಮೇಲೆ ಸುರಿಸುವೆನು. ಏಕೆಂದರೆ, ನಿಶ್ಚಯವಾಗಿ ಗಂಡನ, ಹೆಂಡತಿಯ ಸಂಗಡ, ವೃದ್ಧನ, ದಿನತುಂಬಿದವನ ಸಂಗಡ ಹಿಡಿಯಲಾಗುವರು.</verse>
				<verse number="12">ಅವರ ಮನೆಗಳೂ ಹೊಲಗಳೂ, ಹೆಂಡತಿಯರೂ ಸಹಿತವಾಗಿ ಬೇರೊಬ್ಬರ ಪಾಲಾಗುವುವು. ಏಕೆಂದರೆ, ದೇಶದ ನಿವಾಸಿಗಳ ಮೇಲೆ ನನ್ನ ಕೈಚಾಚುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="13">“ಏಕೆಂದರೆ, ಅವರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರತನಕ, ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.</verse>
				<verse number="14">ಅವರು ನನ್ನ ಜನರ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ. ಸಮಾಧಾನವಿಲ್ಲದಿರುವಾಗ, ‘ಸಮಾಧಾನ, ಸಮಾಧಾನ,’ ಎಂದು ಹೇಳುತ್ತಾರೆ.</verse>
				<verse number="15">ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ. ಲಜ್ಜೆಯನ್ನೇ ಅರಿಯರು. ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. ನಾನು ಅವರನ್ನು ದಂಡಿಸುವ ಕಾಲದಲ್ಲಿ, ಅವರು ಕೆಳಗೆ ಬೀಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="16">ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ, ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ, ಒಳ್ಳೆಯ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ. ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕುವುದು, ಆದರೆ ಅವರು, ‘ನಾವು ನಡೆಯುವುದಿಲ್ಲ,’ ಎಂದರು.</verse>
				<verse number="17">ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ, ತುತೂರಿಯ ಶಬ್ದವನ್ನು ಆಲೈಸಿರಿ, ಎಂದೆನು. ಆದರೆ ಅವರು, ‘ನಾವು ಆಲೈಸುವುದಿಲ್ಲ,’ ಎಂದರು.</verse>
				<verse number="18">ಆದ್ದರಿಂದ ಜನಾಂಗಗಳೇ, ಕೇಳಿರಿ; ಓ ಸಾಕ್ಷಿಗಳೇ, ಅವರಲ್ಲಿ ಇರುವಂಥದ್ದನ್ನು ತಿಳಿದುಕೊಳ್ಳಿರಿ.</verse>
				<verse number="19">ಈ ಭೂಮಿಯೇ, ಕೇಳು. ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಏಕೆಂದರೆ, ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು; ನನ್ನ ನಿಯಮವನ್ನು ತಿರಸ್ಕರಿಸಿದರು.</verse>
				<verse number="20">ಶೆಬದಿಂದ ಸಾಂಬ್ರಾಣಿಯೂ ದೂರದೇಶದಿಂದ ಒಳ್ಳೆಯ ಸುಗಂಧವೂ ನನಗೆ ಬರುವುದು ಏತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚುಗೆಯಾಗಲಿಲ್ಲ. ನಿಮ್ಮ ಬಲಿಗಳು ನನಗೆ ರುಚಿಯಿಲ್ಲ.”</verse>
				<verse number="21">ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಈ ಜನರ ಮುಂದೆ ಅಡೆತಡೆಗಳನ್ನು ಇಡುತ್ತೇನೆ. ತಂದೆಯೂ, ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು. ನೆರೆಯವರೂ, ಅವರ ಸ್ನೇಹಿತರೂ ನಾಶವಾಗುವರು.”</verse>
				<verse number="22">ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬರುವುದು. ದೊಡ್ಡ ಜನಾಂಗವು ಲೋಕದ ಕಟ್ಟಕಡೆಯಿಂದ ಎದ್ದು ಬರುತ್ತದೆ.</verse>
				<verse number="23">ಅವರು ಬಿಲ್ಲನ್ನೂ, ಭಲ್ಲೆಯನ್ನೂ ಹಿಡಿದುಕೊಂಡಿದ್ದಾರೆ; ಅವರು ಕ್ರೂರರು; ಕನಿಕರ ತೋರಿಸುವುದಿಲ್ಲ. ಅವರ ಶಬ್ದವು ಸಮುದ್ರದ ಹಾಗೆ ಭೋರ್ಗರೆಯುತ್ತದೆ. ಓ ಚೀಯೋನಿನ ಪುತ್ರಿಯೇ, ನಿನಗೆ ವಿರೋಧವಾಗಿಯೇ ಯುದ್ಧಮಾಡುವುದಕ್ಕೆ ಸಿದ್ಧವಾಗಿರುವ ಶೂರರಂತೆ ಕುದುರೆಗಳನ್ನು ಹತ್ತಿಕೊಂಡು ಬರುತ್ತಿದ್ದಾರೆ.”</verse>
				<verse number="24">ಅದರ ಕೀರ್ತಿಯನ್ನು ಕೇಳಿದ್ದೇವೆ; ನಮ್ಮ ಕೈಗಳು ಜೋಲಾಡುತ್ತವೆ, ಸಂಕಟವೂ, ಹೆರುವವಳಂತಿರುವ ನೋವೂ ನಮ್ಮನ್ನು ಹಿಡಿಯಿತು.</verse>
				<verse number="25">ಹೊಲಕ್ಕೆ ಹೋಗಬೇಡ; ದಾರಿಯಲ್ಲಿ ನಡೆಯಬೇಡ. ಏಕೆಂದರೆ ಶತ್ರುವಿನ ಖಡ್ಗವೂ, ಅಂಜಿಕೆಯೂ ಸುತ್ತಲೂ ಇವೆ.</verse>
				<verse number="26">ಓ ನನ್ನ ಮಗಳೇ, ನನ್ನ ಪ್ರಜೆಗಳೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು. ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ, ಬಹು ಕಠಿಣವಾದ ಗೋಳಾಟವನ್ನು ಮಾಡು. ನಾಶ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.</verse>
				<verse number="27">“ನೀನು ನನ್ನ ಜನರ ಮಾರ್ಗವನ್ನು ಪರೀಕ್ಷಿಸಿ ತಿಳಿದುಕೊಳ್ಳುವಂತೆ, ನಾನು ನಿನ್ನನ್ನು ನನ್ನ ಜನವೆಂಬ ಅದುರಿಗೆ ಲೋಹ ಶೋಧಕನನ್ನಾಗಿ ನೇಮಿಸಿದ್ದೇನೆ.</verse>
				<verse number="28">ಅವರೆಲ್ಲರು ಕಠಿಣ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ಕಂಚು, ಕಬ್ಬಿಣಕ್ಕೆ ಸಮಾನರು, ಎಲ್ಲರೂ ಕೇಡಿಗರು.</verse>
				<verse number="29">ಕುಲುಮೆಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ಅವನ ಪರಿಶ್ರಮವೆಲ್ಲ ವ್ಯರ್ಥ, ಕೆಟ್ಟವರಿಂದ ಕಲ್ಮಷವನ್ನು ಅವನಿಂದ ತೆಗೆಯಲಾಗಲಿಲ್ಲ.</verse>
				<verse number="30">ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವುದು; ಏಕೆಂದರೆ, ಯೆಹೋವ ದೇವರು ಅವರನ್ನು ತಳ್ಳಿದ್ದಾರೆ.”</verse>
			</chapter>
			<chapter number="7">
				<verse number="1">ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ:</verse>
				<verse number="2">“ಯೆಹೋವ ದೇವರ ಆಲಯದ ಬಾಗಿಲಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು: “ ‘ಯೆಹೂದ್ಯರೇ, ಯೆಹೋವ ದೇವರನ್ನು ಆರಾಧಿಸುವುದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ.</verse>
				<verse number="3">ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ನೆಟ್ಟಗೆಮಾಡಿರಿ. ಆಗ ನಿಮ್ಮನ್ನು ಈ ಸ್ಥಳದಲ್ಲಿ ವಾಸಿಸುವಂತೆ ಮಾಡುವೆನು.</verse>
				<verse number="4">“ಇವುಗಳೇ ಯೆಹೋವ ದೇವರ ದೇವಾಲಯ, ಯೆಹೋವ ದೇವರ ದೇವಾಲಯ, ಯೆಹೋವ ದೇವರ ದೇವಾಲಯ,” ಎಂದು ಹೇಳುವ ಮೋಸಕರ ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.</verse>
				<verse number="5">ಏಕೆಂದರೆ ನೀವು ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ, ಪೂರ್ಣವಾಗಿ ನೆಟ್ಟಗೆ ಮಾಡಿದರೆ; ಮನುಷ್ಯನಿಗೂ, ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯ ನಡೆಸಿದರೆ;</verse>
				<verse number="6">ಪರದೇಶಿಯನ್ನೂ, ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಸಂಕಟ ಪಡಿಸದಿದ್ದರೆ; ಈ ಸ್ಥಳದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲದಿದ್ದರೆ; ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ;</verse>
				<verse number="7">ನಾನು ನಿಮ್ಮನ್ನು ಈ ಸ್ಥಳದಲ್ಲಿ ಎಂದರೆ, ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.</verse>
				<verse number="8">ನೀವು ಪ್ರಯೋಜನವಿಲ್ಲದ ಮೋಸಕರ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.</verse>
				<verse number="9">“ ‘ಕಳ್ಳತನ, ಹತ್ಯೆ, ವ್ಯಭಿಚಾರಗಳನ್ನು ನೀವು ನಡೆಸುವಿರೋ? ಸುಳ್ಳು ಪ್ರಮಾಣವನ್ನು ಮಾಡಿ, ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿ,</verse>
				<verse number="10">ಆಮೇಲೆ ಬಂದು ನನ್ನ ಹೆಸರನ್ನು ಹೊಂದಿರುವ ಈ ಆಲಯದಲ್ಲಿ ನನ್ನ ಮುಂದೆ ನಿಂತುಕೊಂಡು, “ನಾವು ಸುರಕ್ಷಿತರು” ಎಂದು ಹೇಳಿ ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲಾಗಿದ್ದೇವೆಂದು ಹೇಳುವಿರೋ?</verse>
				<verse number="11">ನನ್ನ ಹೆಸರನ್ನು ಹೊಂದಿರುವ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="12">“ ‘ಆದರೆ ಈಗ ಶೀಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಎಂದರೆ, ನಾನು ಮೊದಲು ನನ್ನ ಹೆಸರನ್ನು ಸ್ಥಾಪಿಸಿದ ಸ್ಥಳಕ್ಕೆ ಹೋಗಿರಿ; ಅದಕ್ಕೆ ನಾನು, ನನ್ನ ಜನರಾದ ಇಸ್ರಾಯೇಲರ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.</verse>
				<verse number="13">ಈಗ ಯೆಹೋವ ದೇವರು ಹೇಳುವುದೇನೆಂದರೆ, ನೀವು ಈ ಕೆಲಸಗಳನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮನ್ನು ಕರೆದರೂ, ನೀವು ಉತ್ತರ ಕೊಡದೆ ಹೋದಿರಿ.</verse>
				<verse number="14">ಆದಕಾರಣ ನನ್ನ ಹೆಸರಿನಿಂದ ಕರೆಯಲಾದಂಥ ಮತ್ತು ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ, ನಿಮ್ಮ ಪಿತೃಗಳಿಗೆ ಕೊಟ್ಟ ಸ್ಥಳಕ್ಕೂ, ಶೀಲೋವಿಗೆ ಮಾಡಿದ ಹಾಗೆ ಮಾಡುವೆನು.</verse>
				<verse number="15">ನಿಮ್ಮ ಸಹೋದರರೆಲ್ಲರನ್ನೂ, ಎಫ್ರಾಯೀಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ, ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.’</verse>
				<verse number="16">“ಆದ್ದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ. ಅವರಿಗೋಸ್ಕರ ಮೊರೆಯನ್ನೂ, ಪ್ರಾರ್ಥನೆಯನ್ನೂ ಎತ್ತಬೇಡ. ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ. ಏಕೆಂದರೆ ನಾನು ಅದನ್ನು ಕೇಳಿಸಿಕೊಳ್ಳುವುದಿಲ್ಲ.</verse>
				<verse number="17">ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡುವುದನ್ನು ನೀನು ನೋಡುವುದಿಲ್ಲವೋ?</verse>
				<verse number="18">‘ಗಗನದ ಒಡತಿ,’ ಎಂದು ಇವರು ಕರೆಯುವ ದೇವತೆಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಅವರ ಮಕ್ಕಳು ಸೌದೆಯನ್ನು ಆಯ್ದು ತರುತ್ತಾರೆ. ಗಂಡಸರು ಬೆಂಕಿ ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದುತ್ತಾರೆ. ನನ್ನನ್ನು ಕೆಣಕಬೇಕೆಂದೇ ಅನ್ಯ ದೇವತೆಗಳಿಗೆ ಪಾನ ನೈವೇದ್ಯವನ್ನು ಅರ್ಪಿಸುತ್ತಾರೆ.”</verse>
				<verse number="19">ಯೆಹೋವ ದೇವರು ಅನ್ನುತ್ತಾನೆ: “ಇವರು ಮಾಡುತ್ತಿರುವ ಕೇಡು ನನಗೋ? ಲಜ್ಜೆಯಿಂದ ಮುಖ ಮುಚ್ಚಿಕೊಳ್ಳುವಷ್ಟು ಕೇಡನ್ನು ತಮಗೆ ತಾವೇ ತಂದುಕೊಳ್ಳುತ್ತಿದ್ದಾರಲ್ಲವೇ?”</verse>
				<verse number="20">“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ಈ ಸ್ಥಳದ ಮೇಲೆಯೂ, ಮನುಷ್ಯರ ಮೇಲೆಯೂ, ಮೃಗಗಳ ಮೇಲೆಯೂ, ಹೊಲದ ಮರಗಳ ಮೇಲೆಯೂ, ಭೂಮಿಯ ಫಲದ ಮೇಲೆಯೂ ನನ್ನ ಕೋಪ ಮತ್ತು ಉಗ್ರತೆಯು ಹೊಯ್ಯಲಾಗುವುದು. ಅದು ಉರಿಯುವುದು ಮತ್ತು ಆರಿಹೋಗುವುದಿಲ್ಲ.</verse>
				<verse number="21">“ ‘ಇಸ್ರಾಯೇಲಿನ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ, ಮಾಂಸವನ್ನು ತಿನ್ನಿರಿ.</verse>
				<verse number="22">ಏಕೆಂದರೆ, ನಾನು ನಿಮ್ಮ ಪಿತೃಗಳನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ ದಿವಸದಲ್ಲಿ, ದಹನಬಲಿಗಳ ಮತ್ತು ಬಲಿಗಳ ವಿಷಯ ನಾನು ಅವರ ಸಂಗಡ ಮಾತನಾಡಲಿಲ್ಲ; ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ.</verse>
				<verse number="23">ಆದರೆ ನಾನು ಇದನ್ನು ಅವರಿಗೆ, “ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು; ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೆಯದಾಗುವಂತೆ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ,” ಎಂದು ಆಜ್ಞಾಪಿಸಿ ಹೇಳಿದೆನು.</verse>
				<verse number="24">ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ಆದರೆ ಅವರು ತಮ್ಮ ದುಷ್ಟ ಹೃದಯದ ಆಲೋಚನೆಯ ಪ್ರಕಾರವೂ, ಕಲ್ಪನೆಯ ಪ್ರಕಾರವೂ ನಡೆದುಕೊಂಡು ಮುಂದಕ್ಕೆ ಅಲ್ಲ, ಹಿಂದಕ್ಕೆ ಹೋದರು.</verse>
				<verse number="25">ನಿಮ್ಮ ಪಿತೃಗಳು ಈಜಿಪ್ಟ್ ದೇಶವನ್ನು ಬಿಟ್ಟುಹೋದ ದಿನದಿಂದ ಇಂದಿನವರೆಗೂ ನಾನು ನನ್ನ ದಾಸರಾಗಿರುವ ಸಕಲ ಪ್ರವಾದಿಗಳನ್ನು ಪ್ರತಿದಿನವೂ ನಿಮ್ಮ ಬಳಿಗೆ ಕಳುಹಿಸುತ್ತಾ ಬಂದೆನು.</verse>
				<verse number="26">ಆದರೂ ಅವರು ನನ್ನ ಮಾತಿಗೆ ಕಿವಿಗೊಡದೆ, ತಮ್ಮನ್ನು ಕಠಿಣ ಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.’</verse>
				<verse number="27">“ಆದ್ದರಿಂದ ನೀನು ಈ ಮಾತುಗಳನ್ನೆಲ್ಲಾ ಅವರಿಗೆ ಹೇಳಬೇಕು. ಆದರೆ ಅವರು ನಿನ್ನ ಮಾತನ್ನು ಕೇಳುವುದಿಲ್ಲ. ಅವರನ್ನು ನೀನು ಕರೆಯುವೆ. ಆದರೆ ಅವರು ನಿನಗೆ ಉತ್ತರ ಕೊಡುವುದಿಲ್ಲ.</verse>
				<verse number="28">ಆದ್ದರಿಂದ ಅವರಿಗೆ ಹೀಗೆ ಹೇಳು, ‘ಇದು ಅವರ ದೇವರಾದ ಯೆಹೋವ ದೇವರಿಗೆ ವಿಧೇಯನಾಗದ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸದಂಥ ಜನಾಂಗವಾಗಿದೆ. ಸತ್ಯವು ನಾಶವಾಯಿತು. ಇದು ಅವರ ಬಾಯಿಂದ ತೆಗೆದುಹಾಕಲಾಗಿದೆ.</verse>
				<verse number="29">“ ‘ಓ ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು. ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು. ಏಕೆಂದರೆ ಯೆಹೋವ ದೇವರು ತನ್ನ ಕೋಪಕ್ಕೆ ಪಾತ್ರರಾದ ಈ ಸಂತತಿಯನ್ನು ನಿರಾಕರಿಸಿ ತಳ್ಳಿಬಿಟ್ಟಿದ್ದಾರೆ.</verse>
				<verse number="30">“ ‘ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಯೆಹೋವ ದೇವರು ಹೇಳುತ್ತಾರೆ. ನನ್ನ ಹೆಸರನ್ನು ಹೊಂದಿರುವ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವುದಕ್ಕೆ ತಮ್ಮ ಅಸಹ್ಯವಾದವುಗಳನ್ನು ಇಟ್ಟಿದ್ದಾರೆ.</verse>
				<verse number="31">ಬೆನ್ ಹಿನ್ನೋಮ್ ತಗ್ಗಿನಲ್ಲಿರುವ ತೋಫೆತಿನ ಉನ್ನತ ಸ್ಥಳಗಳನ್ನು ತಮ್ಮ ಪುತ್ರಪುತ್ರಿಯರನ್ನು ಬೆಂಕಿಯಲ್ಲಿ ಸುಡುವುದಕ್ಕೆ ಕಟ್ಟಿದ್ದಾರೆ. ಇದನ್ನು ನಾನು ಆಜ್ಞಾಪಿಸಲಿಲ್ಲ. ಅದು ನನ್ನ ಮನಸ್ಸಿನಲ್ಲಿ ಬರಲಿಲ್ಲ.</verse>
				<verse number="32">ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ, ಇಗೋ, ದಿನಗಳು ಬರಲಿವೆ, ಆ ಕಣಿವೆಗೆ ತೋಫೆತ್ ಮತ್ತು ಬೆನ್ ಹಿನ್ನೋಮ್ ಎಂಬ ಹೆಸರುಗಳು ಹೋಗಿ, ಸಂಹಾರದ ಕಣಿವೆ ಎಂದು ಕರೆಯಲಾಗುವುದು. ಏಕೆಂದರೆ, ಸ್ಥಳವಿಲ್ಲದವರೆಗೂ ತೋಫೆತಿನಲ್ಲಿ ಅವರು ಹೂಳಿಡುವರು.</verse>
				<verse number="33">ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು. ಯಾರೂ ಅವುಗಳನ್ನು ಬೆದರಿಸುವುದಿಲ್ಲ.</verse>
				<verse number="34">ಆಗ ನಾನು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸದ ಶಬ್ದವನ್ನೂ, ಸಂತೋಷ ಶಬ್ದವನ್ನೂ, ಮದುಮಗನ ಶಬ್ದವನ್ನೂ, ಮದುಮಗಳ ಶಬ್ದವನ್ನೂ ನಿಲ್ಲಿಸುವೆನು. ಏಕೆಂದರೆ, ದೇಶವು ಹಾಳಾಗುವುದು.</verse>
			</chapter>
			<chapter number="8">
				<verse number="1">“ ‘ಯೆಹೋವ ದೇವರು ಹೇಳುವುದೇನೆಂದರೆ, ಆ ಕಾಲದಲ್ಲಿ ಅವರು ಯೆಹೂದದ ಅರಸರ ಎಲುಬುಗಳನ್ನೂ, ಅದರ ಪ್ರಧಾನರ ಎಲುಬುಗಳನ್ನೂ, ಯಾಜಕರ ಎಲುಬುಗಳನ್ನೂ, ಪ್ರವಾದಿಗಳ ಎಲುಬುಗಳನ್ನೂ, ಯೆರೂಸಲೇಮಿನ ನಿವಾಸಿಗಳ ಎಲುಬುಗಳನ್ನೂ ಅವರ ಸಮಾಧಿಗಳೊಳಗಿಂದ ಹೊರಗೆ ತರುವರು.</verse>
				<verse number="2">ಅವರು ಪ್ರೀತಿ ಮಾಡಿದಂಥ, ಸೇವಿಸಿದಂಥ, ಹಿಂಬಾಲಿಸಿದಂಥ, ಹುಡುಕಿದಂಥ, ಆರಾಧಿಸಿದಂಥ, ಸೂರ್ಯನ ಮುಂದೆಯೂ, ಚಂದ್ರನ ಮುಂದೆಯೂ, ಸಮಸ್ತ ಆಕಾಶ ಸೈನ್ಯದ ಮುಂದೆಯೂ ಅವುಗಳನ್ನು ತೆರೆದಿಡುವರು; ಹೌದು, ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರವಾಗುವುವು.</verse>
				<verse number="3">ಈ ಕೆಟ್ಟ ಮನೆತನದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು ಎಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’</verse>
				<verse number="4">“ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಅವರು ಬಿದ್ದು ಮತ್ತೆ ಏಳರೋ? ಹಿಂದಿರುಗಿದವನು ಮತ್ತೆ ಬರುವುದಿಲ್ಲವೋ?</verse>
				<verse number="5">ಹಾಗಾದರೆ ಈ ಯೆರೂಸಲೇಮಿನ ಜನರು ಎಂದಿಗೂ ಹಿಂದಿರುಗದಂತೆ ಏಕೆ ಬಿಟ್ಟು ಹೋಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವುದಕ್ಕೆ ನಿರಾಕರಿಸುತ್ತಾರೆ.</verse>
				<verse number="6">ನಾನು ಕಿವಿಗೊಟ್ಟು ಕೇಳಿದೆನು. ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ, “ನಾನು ಎಂಥಾ ಕೆಲಸ ಮಾಡಿದ್ದೇನೆ,” ಎಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ. ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ, ಪ್ರತಿಯೊಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.</verse>
				<verse number="7">ಹೌದು, ಆಕಾಶದಲ್ಲಿಯ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿಯುತ್ತದೆ. ಪಾರಿವಾಳವೂ, ಬಾನಕ್ಕಿಯೂ, ಕೊಕ್ಕರೆಯೂ ತಮ್ಮ ಗಮನಾಗಮನದ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಯೆಹೋವ ದೇವರು ಅಪೇಕ್ಷಿಸುವುದನ್ನು ಅರಿಯರು.</verse>
				<verse number="8">“ ‘ “ನಾವು ಜ್ಞಾನಿಗಳು, ಯೆಹೋವ ದೇವರ ನಿಯಮವು ನಮ್ಮ ಸಂಗಡ ಇದೆ,” ಎಂದು ನೀವು ಹೇಳುವುದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ನಿಯಮಶಾಸ್ತ್ರಿಗಳ ಲೇಖನಿಯು ಮೋಸಕರವಾಗಿದೆ.</verse>
				<verse number="9">ಜ್ಞಾನಿಗಳು ನಾಚಿಕೊಂಡಿದ್ದಾರೆ. ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವ ದೇವರ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಯಾವ ಜ್ಞಾನವಿದೆ.</verse>
				<verse number="10">ಆದ್ದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ, ಅವರ ಹೊಲಗಳನ್ನು ಹೊಸ ಮಾಲಿಕನಿಗೆ ನಾನು ಕೊಟ್ಟುಬಿಡುವೆನು. ಏಕೆಂದರೆ, ಚಿಕ್ಕವನು ಮೊದಲುಗೊಂಡು ದೊಡ್ಡವರತನಕ ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.</verse>
				<verse number="11">ಏಕೆಂದರೆ, ಅವರು ನನ್ನ ಜನರ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ. ಸಮಾಧಾನವಿಲ್ಲದಿರುವಾಗ, “ಸಮಾಧಾನ, ಸಮಾಧಾನ,” ಎಂದು ಹೇಳುತ್ತಾರೆ.</verse>
				<verse number="12">ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ, ಲಜ್ಜೆಯನ್ನೇ ಅರಿಯರು. ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. ನಾನು ಅವರನ್ನು ದಂಡಿಸುವ ಕಾಲದಲ್ಲಿ, ಅವರು ಕೆಳಗೆ ಬೀಳುವರು, ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="13">“ ‘ನಾನು ಅವರ ಫಸಲನ್ನು ನಿರ್ಮೂಲ ಮಾಡಿಬಿಡುವೆನು, ಎಂದು ಯೆಹೋವ ದೇವರು ಹೇಳುತ್ತಾರೆ. ದ್ರಾಕ್ಷಿ ಗಿಡದಲ್ಲಿ ದ್ರಾಕ್ಷಿ ಹಣ್ಣುಗಳು ಇರುವುದಿಲ್ಲ. ಅಂಜೂರ ಮರದಲ್ಲಿ ಅಂಜೂರ ಹಣ್ಣುಗಳು ಇರುವುದಿಲ್ಲ. ಎಲೆಯು ಬಾಡುವುದು. ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟು ಹೋಗುವುವು.’ ”</verse>
				<verse number="14">ನಾವು ಏಕೆ ಸುಮ್ಮನೆ ಕೂತುಕೊಳ್ಳುತ್ತೇವೆ? ನೀವು ಕೂಡಿಕೊಳ್ಳಿರಿ, ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ನಾಶವಾಗೋಣ. ಏಕೆಂದರೆ, ನಾವು ನಮ್ಮ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ ಕಾರಣ, ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ನಾಶಮಾಡಿ, ನಮಗೆ ವಿಷದ ನೀರನ್ನು ಕುಡಿಯಲು ಕೊಟ್ಟಿದ್ದಾರೆ.</verse>
				<verse number="15">ಸಮಾಧಾನಕ್ಕೆ ಕಾದುಕೊಂಡೆವು, ಆದರೆ ಒಳ್ಳೆಯದೇನೂ ಬರಲಿಲ್ಲ. ಆರೋಗ್ಯದ ಸಮಯಕ್ಕೆ ಕಾದಿದ್ದೆವು. ಆದರೆ ಇಗೋ, ಆತಂಕವನ್ನು ನೋಡುತ್ತೇವೆ.</verse>
				<verse number="16">ಅವನ ಕುದುರೆಗಳ ಶ್ವಾಸವು ದಾನಿನಿಂದ ಕೇಳಿಸಿತು. ಅವನ ಬಲವಾದವುಗಳ ಕೆನೆತದ ಶಬ್ದದಿಂದ ದೇಶವೆಲ್ಲಾ ನಡುಗುತ್ತದೆ. ಏಕೆಂದರೆ, ಅವರು ದೇಶವನ್ನೂ, ಅದರಲ್ಲಿರುವುದೆಲ್ಲವನ್ನೂ, ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ನುಂಗಲು ಬಂದಿದ್ದಾರೆ.</verse>
				<verse number="17">“ನಾನು ನಿಮ್ಮಲ್ಲಿ ವಿಷಸರ್ಪಗಳನ್ನು ಮಂತ್ರಕ್ಕೆ ಅಧೀನವಾಗದ ನಾಗಗಳನ್ನೂ ಕಳುಹಿಸುತ್ತೇನೆ. ಅವು ನಿಮ್ಮನ್ನು ಕಚ್ಚುವವು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="18">ದುಃಖದ ನಿಮಿತ್ತ ನನ್ನನ್ನು ಆಧರಿಸಿ ಕೊಳ್ಳಲು ನಾನು ಮನಸ್ಸು ಮಾಡಿದಾಗ, ನನ್ನ ಹೃದಯವು ನನ್ನಲ್ಲಿ ಕುಂದಿಹೋಗಿದೆ.</verse>
				<verse number="19">ದೂರದೇಶದಿಂದ ನನ್ನ ಜನರು ಕೂಗುವ ಮೊರೆಯಿದು: “ಯೆಹೋವ ದೇವರು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ?” ಎಂಬುದೇ ಆದರೂ ಅವರು ತಮ್ಮ ವಿಗ್ರಹಗಳಿಂದಲೂ, ವಿಚಿತ್ರವಾದ ವ್ಯರ್ಥತ್ವಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಏಕೆ?</verse>
				<verse number="20">“ಸುಗ್ಗಿ ಮುಗಿಯಿತು. ಬೇಸಿಗೆ ಕಾಲ ತೀರಿತು. ನಾವಾದರೋ ರಕ್ಷಣೆ ಹೊಂದಲಿಲ್ಲ.”</verse>
				<verse number="21">ನನ್ನ ಜನರು ತುಳಿತಕ್ಕೆ ಒಳಗಾದದ್ದರಿಂದ ನಾನೂ ತುಳಿತಕ್ಕೆ ಒಳಗಾದೆನು. ದುಃಖಿಸಿದೆನು. ಭಯವು ನನ್ನನ್ನು ಹಿಡಿಯಿತು.</verse>
				<verse number="22">ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಗಾಯಕ್ಕೆ ಏಕೆ ಸ್ವಸ್ಥತೆ ಇಲ್ಲ?</verse>
			</chapter>
			<chapter number="9">
				<verse number="1">ಓ, ನನ್ನ ತಲೆ ಚಿಲುಮೆಯೂ, ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೆಯದು, ಆಗ ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲುರಾತ್ರಿ ಅಳುವೆನು.</verse>
				<verse number="2">ಆಹಾ, ಮರುಭೂಮಿಯಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೆಯದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು. ಏಕೆಂದರೆ ಅವರೆಲ್ಲರು ವ್ಯಭಿಚಾರಿಗಳೇ, ವಂಚಕರ ಕೂಟವೇ.</verse>
				<verse number="3">“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವುದಿಲ್ಲ. ಏಕೆಂದರೆ ಅವರು ಒಂದು ಪಾಪದಿಂದ ಇನ್ನೊಂದು ಪಾಪಕ್ಕೆ ಹೋಗುತ್ತಾ, ನನ್ನನ್ನು ಅರಿಯದೆ ಇದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="4">“ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ. ಯಾವ ಸಹೋದರನಲ್ಲಾದರೂ ನಂಬಿಕೆ ಇಡಬೇಡಿರಿ. ಏಕೆಂದರೆ ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸ ಮಾಡುವರು; ನೆರೆಯವರೆಲ್ಲರೂ ಚಾಡಿ ಹೇಳುತ್ತಾ ತಿರುಗಾಡುವರು.</verse>
				<verse number="5">ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತನಾಡರು. ಸುಳ್ಳುಗಳನ್ನು ಹೇಳುವುದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಪಾಪದಿಂದ ತಮ್ಮನ್ನು ಸುಸ್ತಾಗಿಸಿಕೊಳ್ಳುತ್ತಾರೆ.</verse>
				<verse number="6">ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಇದೆ. ಮೋಸದಿಂದಲೇ ನನ್ನನ್ನು ನಿರಾಕರಿಸುತ್ತಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="7">ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: “ಇಗೋ, ನಾನು ಅವರನ್ನು ಕರಗಿಸಿ ಪರಿಶೋಧಿಸುತ್ತೇನೆ. ಏಕೆಂದರೆ ನನ್ನ ಜನರ ಪಾಪಗಳಿಗೋಸ್ಕರ ನಾನು ಇನ್ನೇನು ಮಾಡಲಿ?</verse>
				<verse number="8">ಅವರ ನಾಲಿಗೆ ಎಸೆದ ಬಾಣದಂತಿದೆ. ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ, ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾರೆ.</verse>
				<verse number="9">ಇವುಗಳ ನಿಮಿತ್ತ ನಾನು ಅವರನ್ನು ದಂಡಿಸಬಾರದೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ?”</verse>
				<verse number="10">ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ, ದುಃಖವನ್ನೂ, ಮರುಭೂಮಿಯ ಸ್ಥಳಗಳಿಗೋಸ್ಕರ ಗೋಳಾಟವನ್ನೂ ಎತ್ತುವೆನು. ಅವುಗಳ ಮೂಲಕ ಹಾದುಹೋಗದಂತೆ ಅವು ಸುಟ್ಟುಹೋಗಿದೆ. ದನಗಳ ಕೂಗು ಕಿವಿಗೆ ಬೀಳುವುದಿಲ್ಲ. ಆಕಾಶದ ಪಕ್ಷಿಗಳೂ, ಮೃಗಗಳೂ ಸಹ ಓಡಿ ಹೋಗಿವೆ.</verse>
				<verse number="11">ಯೆರೂಸಲೇಮನ್ನು ದಿಬ್ಬಗಳಾಗಿಯೂ, ನರಿಗಳ ಸ್ಥಾನವಾಗಿಯೂ ಮಾಡುತ್ತೇನೆ. ಯೆಹೂದದ ಪಟ್ಟಣಗಳನ್ನು ನಿವಾಸವಿಲ್ಲದೆ ಹಾಳು ಮಾಡುತ್ತೇನೆ.</verse>
				<verse number="12">ಇದನ್ನು ಗ್ರಹಿಸುವ ಜ್ಞಾನಿಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಯೆಹೋವ ದೇವರ ಬಾಯಿ ಯಾರ ಸಂಗಡ ಮಾತನಾಡಿತು? ದೇಶವು ಯಾವುದಕ್ಕಾಗಿ ನಾಶವಾಗಿ ಹಾದು ಹೋಗುವವನಿಲ್ಲದೆ ಮರುಭೂಮಿಯ ಹಾಗೆ ಹಾಳಾಯಿತು?</verse>
				<verse number="13">ಯೆಹೋವ ದೇವರು ಹೇಳುವುದೇನೆಂದರೆ, “ನಾನು ಅವರ ಮುಂದೆ ಇಟ್ಟ ನನ್ನ ನಿಯಮವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ,</verse>
				<verse number="14">ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ, ತಮ್ಮ ಪಿತೃಗಳು ಅವರಿಗೆ ಬೋಧಿಸಿದ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.”</verse>
				<verse number="15">ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರಿಗೆ ಹೌದು, ಈ ಜನರಿಗೆ ಮಾಚಿಪತ್ರೆಯನ್ನು ತಿನ್ನುವುದಕ್ಕೆ ಕೊಡುತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡುತ್ತೇನೆ.</verse>
				<verse number="16">ಅವರಿಗೂ, ಅವರ ತಂದೆಗಳಿಗೂ ತಿಳಿಯದ ಇತರ ಜನಾಂಗಗಳಲ್ಲಿ ಅವರನ್ನು ಚದರಿಸುವೆನು. ಅವರನ್ನು ತೀರಿಸುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.”</verse>
				<verse number="17">ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೆಕಳುಹಿಸಿರಿ, ಅವರು ಬರಲಿ.</verse>
				<verse number="18">ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣುಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ.</verse>
				<verse number="19">‘ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ, ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆ ಪಡುತ್ತೇವೆ, ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿಬಂತು.’ ”</verse>
				<verse number="20">ಆದ್ದರಿಂದ ಓ ಸ್ತ್ರೀಯರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ. ನಿಮ್ಮ ಪುತ್ರಿಯರಿಗೆ ಗೋಳಾಟವನ್ನೂ, ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.</verse>
				<verse number="21">ಏಕೆಂದರೆ, ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು. ನಮ್ಮ ಕೋಟೆಗಳಲ್ಲಿ ಸೇರಿತು. ಹೊರಗಡೆ ಮಕ್ಕಳನ್ನೂ, ಬೀದಿಗಳಲ್ಲಿ ಯೌವನಸ್ಥರನ್ನೂ ಕಡಿದು ಹಾಕುತ್ತದೆ.</verse>
				<verse number="22">ಯೆಹೋವ ದೇವರು ನನಗೆ ಹೀಗೆಂದರು: “ ‘ಮನುಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳುವುವು. ಧಾನ್ಯ ಕೊಯ್ಯುವವನು ಉಳಿಸಿದ ಕೈಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವುವು.’ ”</verse>
				<verse number="23">ಯೆಹೋವ ದೇವರು ಹೀಗೆ ಹೇಳುತ್ತಾರೆ: “ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳ ಪಡದಿರಲಿ. ಬಲಿಷ್ಠನು ತನ್ನ ಬಲದಲ್ಲಿ ಹೆಚ್ಚಳ ಪಡದಿರಲಿ. ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳ ಪಡದಿರಲಿ.</verse>
				<verse number="24">ಆದರೆ ಹೆಚ್ಚಳ ಪಡುವವನು, ಯೆಹೋವ ದೇವರಾದ ನಾನು ಭೂಮಿಯಲ್ಲಿ ದಯೆಯನ್ನೂ, ನ್ಯಾಯವನ್ನೂ, ನೀತಿಯನ್ನೂ ನಡೆಸುವವನಾಗಿದ್ದೇನೆಂದು ಗ್ರಹಿಸಿ ತಿಳಿದುಕೊಳ್ಳುವುದರಲ್ಲಿಯೇ ಹೆಚ್ಚಳ ಪಡಲಿ. ಇವುಗಳಲ್ಲಿ ನಾನು ಸಂತೋಷಪಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
			</chapter>
			<chapter number="10">
				<verse number="1">ಇಸ್ರಾಯೇಲಿನ ವಂಶದವರೇ, ಯೆಹೋವ ದೇವರು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ.</verse>
				<verse number="2">ಯೆಹೋವ ದೇವರು ಹೀಗೆ ಹೇಳುತ್ತಾರೆ: ಬೇರೆ ಜನಾಂಗಗಳ ಆಚರಣೆಗಳನ್ನು ಅನುಸರಿಸಬೇಡಿರಿ. ಅವರು ಆಕಾಶದ ಗುರುತುಗಳಿಗೆ ಹೆದರುತ್ತಾರೆ. ನೀವು ಅವುಗಳಿಗೆ ಹೆದರಬೇಡಿರಿ.</verse>
				<verse number="3">ಜನಾಂಗಗಳ ಪದ್ಧತಿಗಳು ವ್ಯರ್ಥವಾಗಿವೆ. ಹೇಗೆಂದರೆ, ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ. ಅದು ಕೊಡಲಿಯಿಂದ ಕಡಿದ ಬಡಿಗೆಯವನ ಕೈಕೆಲಸವೇ.</verse>
				<verse number="4">ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ. ಮೊಳೆಗಳಿಂದಲೂ ಸುತ್ತಿಗೆಗಳಿಂದಲೂ ಚಲಿಸದ ಹಾಗೆ ಅದನ್ನು ಬಿಗಿಸುತ್ತಾರೆ.</verse>
				<verse number="5">ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಅವರ ವಿಗ್ರಹಗಳು ಮಾತನಾಡುವುದಿಲ್ಲ. ಅವುಗಳನ್ನು ಹೊತ್ತುಕೊಳ್ಳತಕ್ಕದ್ದು, ಏಕೆಂದರೆ ಅವು ನಡೆಯಲಾರವು. ಅವುಗಳಿಗೆ ಭಯಪಡಬೇಡಿರಿ. ಏಕೆಂದರೆ, ಅವು ಕೆಟ್ಟದ್ದನ್ನು ಮಾಡಲಾರವು. ಒಳ್ಳೆಯದನ್ನು ಮಾಡುವುದೂ ಸಹ ಅವುಗಳಲ್ಲಿ ಇಲ್ಲ.</verse>
				<verse number="6">ಓ ಯೆಹೋವ ದೇವರೇ, ನಿಮ್ಮ ಹಾಗೆ ಯಾರೂ ಇಲ್ಲ. ನೀವು ಮಹೋತ್ತಮರು, ನಿಮ್ಮ ಹೆಸರು ಪರಾಕ್ರಮದಲ್ಲಿ ಮಹತ್ತರವಾದದ್ದು.</verse>
				<verse number="7">ಓ ಜನಾಂಗಗಳ ಅರಸರಾದವರೇ, ನಿಮಗೆ ಭಯಪಡದವನ್ಯಾರು? ಏಕೆಂದರೆ, ನಿಮಗೆ ಅದು ಸಲ್ಲತಕ್ಕದ್ದು. ಏಕೆಂದರೆ, ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ, ಅವುಗಳ ಎಲ್ಲಾ ರಾಜ್ಯಗಳಲ್ಲಿಯೂ ನಿಮ್ಮ ಹಾಗೆ ಯಾರೂ ಇಲ್ಲ.</verse>
				<verse number="8">ಆದರೆ ಅವರು ಮಂದರೂ ಮೂರ್ಖರೂ ಆಗಿದ್ದಾರೆ. ಅವರಿಗೆ ವ್ಯರ್ಥವಾದ ಮರ, ಬೊಂಬೆಗಳಿಂದ ಬೋಧನೆಯಾಗಿವೆ.</verse>
				<verse number="9">ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ, ಬಂಗಾರವನ್ನು ಊಫಜಿನಿಂದ ತರುತ್ತಾರೆ. ಅದು ಕೆತ್ತನೆಯವನ ಕೆಲಸವು ಮತ್ತು ಎರಕ ಹೊಯ್ಯುವವನ ಕೈಯಿಂದ ಉಂಟಾದವುಗಳೂ ಆಗಿವೆ. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ. ಅವುಗಳೆಲ್ಲಾ ಕೌಶಲ್ಯಗಾರರ ಕೈಕೆಲಸವೇ.</verse>
				<verse number="10">ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ. ಅವರು ಜೀವಸ್ವರೂಪರಾದ ದೇವರೂ, ನಿತ್ಯನಾದ ಅರಸರೂ ಆಗಿದ್ದಾರೆ. ಅವರ ರೌದ್ರದಿಂದ ಭೂಮಿ ಕಂಪಿಸುವುದು. ಅವರ ಉಗ್ರತೆಯನ್ನು ಜನಾಂಗಗಳು ತಾಳಲಾರವು.</verse>
				<verse number="11">“ನೀವು ಅವರಿಗೆ ಹೀಗೆ ಹೇಳಬೇಕು: ‘ಆಕಾಶಗಳನ್ನೂ ಭೂಮಿಯನ್ನೂ ಉಂಟು ಮಾಡದ ದೇವರುಗಳು, ಭೂಮಿಯ ಮೇಲಿನಿಂದಲೂ ಈ ಆಕಾಶದ ಕೆಳಗಿನಿಂದಲೂ ನಾಶವಾಗುವುವು.’ ”</verse>
				<verse number="12">ಆದರೆ ದೇವರು ತಮ್ಮ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿ, ತಮ್ಮ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತಮ್ಮ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾರೆ.</verse>
				<verse number="13">ಅವರ ಗರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ, ಅವರು ಭೂಮಿಯ ಕಟ್ಟಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಗೋಸ್ಕರ ಮಿಂಚನ್ನು ಉಂಟುಮಾಡುತ್ತಾರೆ. ತಮ್ಮ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾರೆ.</verse>
				<verse number="14">ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ. ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ. ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ, ಅವುಗಳಲ್ಲಿ ಉಸಿರೇ ಇಲ್ಲ.</verse>
				<verse number="15">ಅವು ವ್ಯರ್ಥ, ಹಾಸ್ಯಾಸ್ಪದದ ಕೆಲಸ. ಅವುಗಳ ದಂಡನೆಯ ಕಾಲದಲ್ಲಿ ಅವು ನಾಶವಾಗುವುವು.</verse>
				<verse number="16">ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ. ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ.</verse>
				<verse number="17">ಮುತ್ತಿಗೆಗೆ ಒಳಗಾದವರೇ, ನಿಮ್ಮ ದೇಶ ಬಿಡಲು ನಿಮ್ಮ ಸೊತ್ತುಗಳನ್ನು ಕೂಡಿಸಿರಿ.</verse>
				<verse number="18">ಏಕೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣೆಯಿಂದ ಎಸೆದುಬಿಡುತ್ತೇನೆ. ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ.”</verse>
				<verse number="19">ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ವಾಸಿಪಡಿಸಲಾಗದು. ಆದರೆ ನಾನು ನಿಶ್ಚಯವಾಗಿ, “ಇದು ನನ್ನ ರೋಗ, ಇದನ್ನು ನಾನು ಸಹಿಸಲೇಬೇಕಾಗಿದೆ,” ಎಂದೆನು.</verse>
				<verse number="20">ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ. ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ; ಅವರು ಇಲ್ಲ. ಇನ್ನು ಮೇಲೆ ನನ್ನ ಡೇರೆಯನ್ನು ಹರಡುವುದಕ್ಕೂ, ನನ್ನ ಪರದೆಗಳನ್ನು ನಿಲ್ಲಿಸುವುದಕ್ಕೂ ಒಬ್ಬನೂ ಇಲ್ಲ.</verse>
				<verse number="21">ಏಕೆಂದರೆ, ಕುರುಬರು ಪಶುಗಳಂತಾದರು. ಅವರು ಯೆಹೋವ ದೇವರನ್ನು ಹುಡುಕಲಿಲ್ಲ. ಆದ್ದರಿಂದ ಅವರು ಸಫಲವಾಗುವುದಿಲ್ಲ. ಅವರ ಮಂದೆಗಳೆಲ್ಲಾ ಚದರಿಸಲಾಗುವುವು.</verse>
				<verse number="22">ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವುದಕ್ಕೂ, ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೂ, ಸುದ್ದಿಯ ಶಬ್ದವೂ, ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.</verse>
				<verse number="23">ಓ ಯೆಹೋವ ದೇವರೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ, ತನ್ನ ಹೆಜ್ಜೆ ನೆಟ್ಟಗೆ ಮಾಡುವುದು ನಡೆಯುವ ಮನುಷ್ಯನದ್ದಲ್ಲವೆಂದೂ ಬಲ್ಲೆನು.</verse>
				<verse number="24">ಓ ಯೆಹೋವ ದೇವರೇ, ನನ್ನನ್ನು ಶಿಸ್ತುಪಡಿಸಿರಿ. ಆದರೆ ಮಿತಿಮೀರಿ ದಂಡಿಸಬೇಡಿರಿ, ನಿಮ್ಮ ಕೋಪದಲ್ಲಿ ಅಲ್ಲ. ಇಲ್ಲವಾದರೆ ನಾನು ಇಲ್ಲದೆಹೋಗುವೆನು.</verse>
				<verse number="25">ನಿಮ್ಮನ್ನು ತಿಳಿಯದವರ ಮೇಲೆಯೂ, ನಿಮ್ಮ ಹೆಸರನ್ನು ಅರಿಯದ ದೇಶಗಳ ಮೇಲೆಯೂ, ನಿಮ್ಮ ಕೋಪವನ್ನು ಸುರಿದುಬಿಡಿರಿ. ಏಕೆಂದರೆ, ಅವರು ಯಾಕೋಬ್ಯರನ್ನು ನುಂಗಿಬಿಟ್ಟಿದ್ದಾರೆ. ಹೌದು, ಅವರನ್ನು ನುಂಗಿದ್ದಲ್ಲದೆ, ಅವರ ಸ್ವದೇಶವನ್ನು ಸಹ ನಾಶಮಾಡಿದ್ದಾರೆ.</verse>
			</chapter>
			<chapter number="11">
				<verse number="1">ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ,</verse>
				<verse number="2">“ಒಡಂಬಡಿಕೆಯ ಈ ವಚನಗಳನ್ನು ಕೇಳಿ, ಯೆಹೂದ್ಯರಿಗೂ ಯೆರೂಸಲೇಮಿನ ನಿವಾಸಿಗಳಿಗೂ ಸಾರು.</verse>
				<verse number="3">ನೀನು ಅವರಿಗೆ ಹೇಳಬೇಕಾದುದು: ಇಸ್ರಾಯೇಲ್ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ.</verse>
				<verse number="4">ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಈಜಿಪ್ಟ್ ದೇಶದಿಂದ ನಿಮ್ಮ ಪೂರ್ವಜರನ್ನು ನಾನು ಬರಮಾಡಿದಾಗ, ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ವಿಧಿಗಳನ್ನೆಲ್ಲಾ ಕೈಗೊಂಡರೆ, ನನ್ನ ಪ್ರಜೆಯಾಗುವಿರಿ; ನಾನು ನಿಮ್ಮ ದೇವರಾಗಿರುವೆನು.</verse>
				<verse number="5">ಹಾಲು ಜೇನು ಹರಿಯುವ ನಾಡನ್ನು, ಎಂದರೆ ಇಂದು ನೀವಿರುವ ನಾಡನ್ನು ಕೊಡುವುದಾಗಿ ನಿಮ್ಮ ಮೂಲ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವ ಮಾತು.” “ಓ ಯೆಹೋವ ದೇವರೇ, ಹಾಗೆಯೇ ಆಗಲಿ,” ಎಂದೆನು.</verse>
				<verse number="6">ತರುವಾಯ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿಯ ಬೀದಿಗಳಲ್ಲಿಯೂ ಸಾರಿ ಹೇಳು. ‘ಹೇಗೆಂದರೆ, ಈ ಒಡಂಬಡಿಕೆಯ ಮಾತುಗಳನ್ನು ಕೇಳಿ, ಅವುಗಳನ್ನು ಮಾಡಿರಿ.</verse>
				<verse number="7">ಏಕೆಂದರೆ ನಾನು ನಿಮ್ಮ ತಂದೆಗಳಿಗೆ, “ನನ್ನ ಮಾತನ್ನು ಕೇಳಿ,” ಎಂದು ಖಂಡಿತವಾಗಿ ಹೇಳಿದೆನು. ಅವರನ್ನು ಈಜಿಪ್ಟ್ ದೇಶದೊಳಗಿಂದ ಮೇಲೆ ಬರಮಾಡಿದ ದಿವಸ ಮೊದಲುಗೊಂಡು ಇಂದಿನವರೆಗೂ ಆಜ್ಞಾಪಿಸುತ್ತಾ ಬಂದಿದ್ದೇನೆ.</verse>
				<verse number="8">ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡೆದುಕೊಂಡರು. ಆದ್ದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.’ ”</verse>
				<verse number="9">ತರುವಾಯ, ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ, “ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡುಬಂದಿದೆ.</verse>
				<verse number="10">ನನ್ನ ಮಾತುಗಳನ್ನು ಕೇಳಲೊಲ್ಲದ ತಮ್ಮ ಪಿತೃಗಳ ಅಕ್ರಮಗಳಿಗೆ ತಿರುಗಿಕೊಂಡಿದ್ದಾರೆ. ಬೇರೆ ದೇವರುಗಳನ್ನು ಸೇವಿಸುವುದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ. ಇಸ್ರಾಯೇಲಿನ ವಂಶದವರೂ ಯೆಹೂದದ ವಂಶದವರೂ ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಗಳನ್ನು ಮೀರಿದ್ದಾರೆ.</verse>
				<verse number="11">ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ಅವರು ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ತರುವೆನು. ಅವರು ನನಗೆ ಕೂಗಿದರೂ ನಾನು ಅವರನ್ನು ಕೇಳುವುದಿಲ್ಲ.</verse>
				<verse number="12">ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು. ಆದರೆ ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವುದೇ ಇಲ್ಲ.</verse>
				<verse number="13">ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು. ಯೆರೂಸಲೇಮಿಗೆ ಎಷ್ಟು ಬೀದಿಗಳೋ, ಅಷ್ಟು ಬಲಿಪೀಠಗಳನ್ನು ನಾಚಿಗೆಗೆ ಎಂದರೆ, ಅಷ್ಟು ಬಲಿಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವುದಕ್ಕೆ ಇಟ್ಟಿದ್ದೀ.’</verse>
				<verse number="14">“ಆದ್ದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ. ಅವರಿಗೋಸ್ಕರ ಮೊರೆಯನ್ನೂ, ಪ್ರಾರ್ಥನೆಯನ್ನೂ ಎತ್ತಬೇಡ. ಏಕೆಂದರೆ, ತಮ್ಮ ಕೇಡಿನ ನಿಮಿತ್ತ ನನ್ನ ಕೂಗುವ ಸಮಯದಲ್ಲಿ ನಾನು ಕೇಳೆನು.</verse>
				<verse number="15">“ನನ್ನ ಪ್ರಿಯಳಿಗೆ ನನ್ನ ಆಲಯದಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡೆಸಿದ್ದಾಳೆ. ನೀನು ಸಮರ್ಪಿಸಿದ ಮಾಂಸದ ಬಲಿಯು ನಿನ್ನ ಶಿಕ್ಷೆಯನ್ನು ರದ್ದುಗೊಳಿಸುವುದೋ? ನೀನು ಕೆಟ್ಟತನ ಮಾಡುವಾಗ ಉಲ್ಲಾಸಪಡುತ್ತೀ.”</verse>
				<verse number="16">ಸೌಂದರ್ಯವಾದ ಒಳ್ಳೆಯ ಹಣ್ಣುಳ್ಳ ಹಸುರಾದ ಓಲಿವ್ ಗಿಡವೆಂದು ಯೆಹೋವ ದೇವರು ನಿನಗೆ ಹೆಸರಿಟ್ಟರು. ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸುವನು. ಅದರ ಕೊಂಬೆಗಳು ಮುರಿದು ಹೋಗುವುವು.</verse>
				<verse number="17">ಇಸ್ರಾಯೇಲಿನ ವಂಶವೂ ಯೆಹೂದದ ವಂಶವೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ, ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ, ನಿನ್ನನ್ನು ನೆಟ್ಟ ಸೇನಾಧೀಶ್ವರ ಯೆಹೋವ ದೇವರು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾರೆ.</verse>
				<verse number="18">ಯೆಹೋವ ದೇವರು ತಿಳಿಸಿದ್ದರಿಂದಲೇ ಶತ್ರುಗಳು ನನಗೆ ವಿರುದ್ಧ ಹೂಡಿದ್ದ ಕುತಂತ್ರವು ನನಗೆ ಗೊತ್ತಾಯಿತು. ಅವರ ಕೃತ್ಯಗಳನ್ನು ನನಗೆ ತೋರಿಸಲಾಯಿತು.</verse>
				<verse number="19">ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. ಆದರೆ ನನ್ನ ವಿರುದ್ಧ ಸಂಚು ಹೂಡುತ್ತಿದ್ದಾರೆಂದು ನನಗೆ ತಿಳಿದಿರಲಿಲ್ಲ. “ಮರವನ್ನು ಫಲ ಸಹಿತ ನಾಶ ಪಡಿಸೋಣ, ಜೀವ ಲೋಕದಿಂದ ಇವನನ್ನು ನಿರ್ಮೂಲ ಮಾಡೋಣ, ಅವನ ಹೆಸರೇ ಇಲ್ಲದಂತಾಗಲಿ.”</verse>
				<verse number="20">ಆದರೆ ನೀತಿಯಾಗಿ ನ್ಯಾಯತೀರಿಸುವಂಥ ಅಂತರಿಂದ್ರಿಯಗಳನ್ನೂ, ಹೃದಯವನ್ನೂ ಶೋಧಿಸುವಂಥ ಸೇನಾಧೀಶ್ವರ ಯೆಹೋವ ದೇವರೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ಏಕೆಂದರೆ ನಿನಗೆ ನನ್ನ ವ್ಯಾಜ್ಯವನ್ನು ಒಪ್ಪಿಸಿದ್ದೇನೆ.</verse>
				<verse number="21">ಆದ್ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ ನೀನು, “ನಮ್ಮ ಕೈಯಿಂದ ಸಾಯದ ಹಾಗೆ ಯೆಹೋವ ದೇವರ ಹೆಸರಿನಲ್ಲಿ ಪ್ರವಾದನೆ ಹೇಳಬೇಡ,” ಅನ್ನುವವರಿಗೆ ಯೆಹೋವ ದೇವರು ಹೇಳುವುದೇನೆಂದರೆ,</verse>
				<verse number="22">ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಖಡ್ಗದಿಂದ ಸಾಯುವರು. ಅವರ ಪುತ್ರಪುತ್ರಿಯರು ಹಸಿವೆಯಿಂದ ಸಾಯುವರು.</verse>
				<verse number="23">ಅವರಲ್ಲಿ ಶೇಷವು ಇರುವುದಿಲ್ಲ. ಏಕೆಂದರೆ ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಎಂದರೆ ಅವರ ಶಿಕ್ಷೆಯ ವರ್ಷವನ್ನೇ ತರುತ್ತೇನೆ.”</verse>
			</chapter>
			<chapter number="12">
				<verse number="1">ಓ ಯೆಹೋವ ದೇವರೇ, ನಾನು ನಿಮ್ಮ ಸಂಗಡ ವಾದಿಸುವಾಗ, ನೀವು ನೀತಿವಂತರೇ ಆಗಿದ್ದೀರಿ. ಆದರೂ ನಾನು ನಿಮ್ಮ ಸಂಗಡ ನ್ಯಾಯವಾದವುಗಳನ್ನು ಕುರಿತು ಮಾತನಾಡುವೆನು. ದುಷ್ಟರ ಮಾರ್ಗವು ಸಮೃದ್ಧಿಯಾಗುವುದು ಏಕೆ? ಮಹಾ ವಂಚನೆ ಮಾಡುವವರೆಲ್ಲರು ಸುಖವಾಗಿರುವುದು ಏಕೆ?</verse>
				<verse number="2">ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದು ಏಕೆ? ನೀವು ಅವರನ್ನು ನಾಟಿದ್ದೀರಿ, ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ, ನೀವು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.</verse>
				<verse number="3">ಯೆಹೋವ ದೇವರೇ, ನೀವು ನನ್ನನ್ನು ತಿಳಿದಿದ್ದೀರಿ, ನನ್ನನ್ನು ನೋಡುತ್ತಾ ನಿಮ್ಮೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತೀರಿ, ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡಿರಿ.</verse>
				<verse number="4">ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು, ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯ ಗತಿಯನ್ನು ನೋಡುವುದೇ ಇಲ್ಲ, ಎಂದು ಹೇಳಿದ್ದಾರಷ್ಟೆ.</verse>
				<verse number="5">“ಕಾಲಾಳುಗಳ ಸಂಗಡ ಓಡುವಾಗ ನಿನಗೆ ಆಯಾಸವಾದರೆ, ಕುದುರೆಗಳ ಸಂಗಡ ಹೇಗೆ ಹೋರಾಡುವೆ? ನೀನು ಸುರಕ್ಷಿತವಾದ ದೇಶದಲ್ಲಿ ಎಡವಿದರೆ, ಯೊರ್ದನಿನ ದಟ್ಟ ಅಡವಿಯಲ್ಲಿ ಹೇಗೆ ಸುಧಾರಿಸುವೆ?</verse>
				<verse number="6">ಏಕೆಂದರೆ, ನಿನ್ನ ಸಹೋದರರೂ, ನಿನ್ನ ತಂದೆಯ ಮನೆತನದವರೂ ನಿನಗೆ ವಂಚನೆ ಮಾಡಿದ್ದಾರೆ. ಹೌದು, ಇವರೇ ನಿನಗೆ ವಿರೋಧವಾಗಿ ಬಂದು ಜೋರಾಗಿ ಕೂಗಿದ್ದಾರೆ. ಅವರು ನಿನಗೆ ಒಳ್ಳೆಯ ಮಾತುಗಳನ್ನು ಹೇಳಿದರೂ, ಅವರನ್ನು ನಂಬಬೇಡ.</verse>
				<verse number="7">“ನನ್ನ ಮನೆಯನ್ನು ಬಿಟ್ಟಿದ್ದೇನೆ, ನನ್ನ ಸೊತ್ತನ್ನು ತ್ಯಜಿಸಿದ್ದೇನೆ. ನನ್ನ ಪ್ರಾಣಕ್ಕೆ ಅತಿ ಪ್ರಿಯವಾದವಳನ್ನು ಅವಳ ಶತ್ರುಗಳ ಕೈಯಲ್ಲಿ ಒಪ್ಪಿಸಿದ್ದೇನೆ.</verse>
				<verse number="8">ನನ್ನ ಸೊತ್ತು ನನಗೆ ಅಡವಿಯಲ್ಲಿರುವ ಸಿಂಹದ ಹಾಗಾಯಿತು. ಅದು ನನಗೆ ವಿರೋಧವಾಗಿ ಕೂಗುತ್ತದೆ. ಆದ್ದರಿಂದ ಅದನ್ನು ಹಗೆ ಮಾಡಿದ್ದೇನೆ.</verse>
				<verse number="9">ನನ್ನ ಸೊತ್ತು ನನಗೆ ಚಿತ್ರವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಹದ್ದುಗಳು ಅದಕ್ಕೆ ವಿರೋಧವಾಗಿವೆ. ಬನ್ನಿ, ಕಾಡುಮೃಗಗಳನ್ನೆಲ್ಲಾ ಕೂಡಿಸಿರಿ, ನುಂಗುವುದಕ್ಕೆ ಅವುಗಳನ್ನು ತನ್ನಿರಿ.</verse>
				<verse number="10">ಅನೇಕ ಕುರುಬರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ; ನನ್ನ ಹೊಲವನ್ನು ತುಳಿದುಬಿಟ್ಟಿದ್ದಾರೆ; ನಾನು ಮೆಚ್ಚಿದ ಭಾಗವನ್ನು ಹಾಳಾದ ಮರುಭೂಮಿಯಾಗಿ ಮಾಡಿದ್ದಾರೆ.</verse>
				<verse number="11">ಅದನ್ನು ಹಾಳು ಮಾಡಿದ್ದಾರೆ. ಅದು ಒಣಗಿ ಬರಿದಾಗಿ ಹೋಗಿದೆ. ದೇಶವೆಲ್ಲಾ ಹಾಳಾಯಿತು. ಆದಾಗ್ಯೂ ಒಬ್ಬನಾದರೂ ಅದನ್ನು ಮನಸ್ಸಿಗೆ ತರುವುದಿಲ್ಲ.</verse>
				<verse number="12">ಮರುಭೂಮಿಯಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ನಾಶಮಾಡುವವರು ಬಂದಿದ್ದಾರೆ. ಏಕೆಂದರೆ, ಯೆಹೋವ ದೇವರ ಖಡ್ಗವು ದೇಶದ ಒಂದು ಕಡೆಯಿಂದ ದೇಶದ ಇನ್ನೊಂದು ಕಡೆಯವರೆಗೂ ನುಂಗಿಬಿಡುತ್ತದೆ. ಯಾವ ಮನುಷ್ಯನೂ ಸುರಕ್ಷಿತವಾಗಿ ಉಳಿಯುವುದಿಲ್ಲ.</verse>
				<verse number="13">ಗೋಧಿಯನ್ನು ಬಿತ್ತಿದ್ದಾರೆ, ಆದರೆ ಮುಳ್ಳುಗಳನ್ನು ಕೊಯ್ಯುವವರು ಕಷ್ಟಪಟ್ಟಿದ್ದಾರೆ, ಆದರೆ ಪ್ರಯೋಜನವಾಗುವುದಿಲ್ಲ. ಯೆಹೋವ ದೇವರ ಉಗ್ರಕೋಪದ ಉರಿಯಿಂದ ನಿಮ್ಮ ಸುಗ್ಗಿಯ ನಿಮಿತ್ತ ನಾಚಿಕೆ ಪಡುವಿರಿ.”</verse>
				<verse number="14">ಯೆಹೋವ ದೇವರ ಸ್ವಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ: “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. ಯೆಹೂದ ವಂಶವನ್ನು ಅವರ ಮಧ್ಯೆಯಿಂದ ಕಿತ್ತುಬಿಡುವೆನು.</verse>
				<verse number="15">ನಾನು ಅವರನ್ನು ಕಿತ್ತು ಹಾಕಿದ ಮೇಲೆ, ನಾನು ಹಿಂದಿರುಗಿ ಅವರನ್ನು ಕರುಣಿಸುವೆನು. ತಮ್ಮ ತಮ್ಮ ಸೊತ್ತಿಗೂ, ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು.</verse>
				<verse number="16">ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ‘ಈಗ ಯೆಹೋವ ದೇವರ ಜೀವದಾಣೆ,’ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವುದಕ್ಕೆ ನನ್ನ ಜನರ ಮಾರ್ಗಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ, ಆಗ ಅವರು ನನ್ನ ಜನರ ನಡುವೆ ನೆಲೆಗೊಂಡು ವೃದ್ಧಿಯಾಗುವರು.</verse>
				<verse number="17">ಆದರೆ ಅವರು ಕೇಳದೆ ಹೋದರೆ, ಆ ಜನಾಂಗವನ್ನು ಸಂಪೂರ್ಣವಾಗಿ ಕಿತ್ತು ನಾಶಮಾಡುವೆನು,” ಎಂದು ಯೆಹೋವ ದೇವರು ನುಡಿಯುತ್ತಾರೆ.</verse>
			</chapter>
			<chapter number="13">
				<verse number="1">ಯೆಹೋವ ದೇವರು ನನಗೆ, “ನೀನು ಹೋಗಿ, ನಾರಿನ ನಡುಕಟ್ಟು ಒಂದನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ. ಅದನ್ನು ನೀರಿನಲ್ಲಿ ನೆನೆಸಬೇಡ,” ಎಂದು ಅಪ್ಪಣೆಕೊಟ್ಟರು.</verse>
				<verse number="2">ನಾನು ಯೆಹೋವ ದೇವರ ಮಾತಿನಂತೆ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೊಂಡೆ.</verse>
				<verse number="3">ಆಮೇಲೆ, “ನೀನು ಸೊಂಟಕ್ಕೆ ಬಿಗಿದ ಆ ನಡುಕಟ್ಟನ್ನು ತೆಗೆದುಕೊಂಡು,</verse>
				<verse number="4">ಯೂಫ್ರೇಟೀಸ್ ನದಿಗೆ ಹೋಗಿ ಅದನ್ನು ಅಲ್ಲಿಯ ಬಂಡೆಯ ಸಂದಿಯೊಳಗೆ ಬಚ್ಚಿಡು,” ಎಂಬುದಾಗಿ ಯೆಹೋವ ದೇವರ ಎರಡನೆಯ ಆದೇಶ ನನಗೆ ಬಂದಿತು.</verse>
				<verse number="5">ಆಗ ಯೆಹೋವ ದೇವರ ಅಪ್ಪಣೆಯ ಮೇರೆಗೆ ನಾನು ಹೋಗಿ, ಯೂಫ್ರೇಟೀಸ್ ನದಿಯ ಬಳಿಯಲ್ಲಿ ಅದನ್ನು ಬಚ್ಚಿಟ್ಟೆ.</verse>
				<verse number="6">ಬಹು ದಿನಗಳ ಮೇಲೆ ಯೆಹೋವ ದೇವರು ನನಗೆ, “ಹೊರಡು, ಯೂಫ್ರೇಟೀಸ್ ನದಿಗೆ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ,” ಎಂದು ಹೇಳಿದರು.</verse>
				<verse number="7">ಆಗ ನಾನು ಯೂಫ್ರೇಟೀಸ್ ನದಿಗೆ ಹೋಗಿ ಹುಡುಕಿ, ನಾನು ಬಚ್ಚಿಟ್ಟ ಸ್ಥಳದಿಂದ ಆ ನಡುಕಟ್ಟನ್ನು ತೆಗೆದೆ. ಆದರೆ ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು.</verse>
				<verse number="8">ಆಗ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನೆಂದರೆ,</verse>
				<verse number="9">“ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಈ ಪ್ರಕಾರ ನಾನು ಯೆಹೂದದ ಗರ್ವವನ್ನೂ, ಯೆರೂಸಲೇಮಿನ ಮಹಾ ಗರ್ವವನ್ನು ಕೆಡಿಸುವೆನು.</verse>
				<verse number="10">ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡೆದುಕೊಂಡು, ಬೇರೆ ದೇವರುಗಳನ್ನು ಸೇವಿಸುವುದಕ್ಕೂ, ಅವುಗಳನ್ನು ಆರಾಧಿಸುವುದಕ್ಕೂ ಹಿಂಬಾಲಿಸುವ ಈ ದುಷ್ಟಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.</verse>
				<verse number="11">ಯಾವ ಪ್ರಕಾರ ಇದು ಮನುಷ್ಯನ ನಡುವಿಗೆ ಹತ್ತಿಕೊಳ್ಳುವುದೋ, ಅದೇ ಪ್ರಕಾರ ನಾನು ಇಸ್ರಾಯೇಲಿನ ಮನೆತನವನ್ನೆಲ್ಲವನ್ನೂ, ಯೆಹೂದದ ಮನೆತನವನ್ನೆಲ್ಲವನ್ನೂ ನನಗೆ ಜನರೂ ಹೆಸರೂ ಸ್ತೋತ್ರವೂ ಮಹಿಮೆಯೂ ಆಗುವ ಹಾಗೆ ನನಗೆ ಹತ್ತಿಕೊಳ್ಳುವಂತೆ ಮಾಡಿದೆನು, ಆದರೆ ಅವರು ಕೇಳದೇ ಹೋದರು ಎಂದು ಯೆಹೋವ ದೇವರ ಅನ್ನುತ್ತಾರೆ.’</verse>
				<verse number="12">“ಆದ್ದರಿಂದ ನೀನು ಅವರಿಗೆ ಈ ಮಾತನ್ನು ಹೇಳಬೇಕು: ‘ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಗಡಿಗೆಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವುವು. ಆಗ ಅವರು ನಿನಗೆ ಗಡಿಗೆಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವುವೆಂದು ನಮಗೆ ಚೆನ್ನಾಗಿ ತಿಳಿಯಿತಲ್ಲವೋ,’ ಎಂದು ನಿನಗೆ ಹೇಳುವರು.</verse>
				<verse number="13">ಆಗ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ನಾನು ಈ ದೇಶದ ನಿವಾಸಿಗಳನ್ನೆಲ್ಲಾ ದಾವೀದನ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಅರಸರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ, ಯೆರೂಸಲೇಮಿನ ನಿವಾಸಿಗಳೆಲ್ಲರನ್ನೂ ಅಮಲಿನಿಂದ ತುಂಬಿಸುವೆನು.</verse>
				<verse number="14">ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು ಹಾಗೂ ನಾಶಮಾಡದೆ ಬಿಡೆನು,’ ಇದು ಯೆಹೋವ ದೇವರಾದ ನನ್ನ ನುಡಿ.”</verse>
				<verse number="15">ಕೇಳಿರಿ, ಕಿವಿಗೊಡಿರಿ, ಗರ್ವಪಡಬೇಡಿರಿ; ಏಕೆಂದರೆ ಯೆಹೋವ ದೇವರು ಮಾತನಾಡಿದ್ದಾರೆ.</verse>
				<verse number="16">ಅವರು ಕತ್ತಲೆಯನ್ನು ತರುವುದಕ್ಕಿಂತ ಮೊದಲು ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವುದಕ್ಕಿಂತ ಮುಂಚೆ ನಿಮ್ಮ ದೇವರಾದ ಯೆಹೋವ ದೇವರನ್ನು ಮಹಿಮೆಪಡಿಸಿರಿ. ನೀವು ಬೆಳಕನ್ನು ನಿರೀಕ್ಷಿಸಿದ್ದೀರಿ. ಆದರೆ ಅವರು ಗಾಡಾಂಧಕಾರದ ಗುಡ್ಡಗಳನ್ನು ತಂದಾರು.</verse>
				<verse number="17">ನೀವು ಕೇಳದಿದ್ದರೆ, ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು, ಯೆಹೋವ ದೇವರ ಮಂದೆಯು ಸೆರೆಯಾಗಿ ಹೋದದ್ದರಿಂದ ಬಹಳವಾಗಿ ಅಳುವೆನು. ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು.</verse>
				<verse number="18">ರಾಜನಿಗೂ ರಾಜಮಾತೆಗೂ ಹೀಗೆ ಹೇಳಿರಿ, “ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ.”</verse>
				<verse number="19">ದಕ್ಷಿಣ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ. ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.</verse>
				<verse number="20">ಚೀಯೋನೇ, ಕಣ್ಣೆತ್ತು, ಉತ್ತರ ದಿಕ್ಕಿನಿಂದ ಬರುವವರನ್ನು ನೋಡು, ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡು ಎಲ್ಲಿ?</verse>
				<verse number="21">ನಿಮ್ಮ ವಿಶೇಷ ಮಿತ್ರರಾಗಿ ನೀವು ಬೆಳೆಸಿದವರನ್ನು ಯೆಹೋವ ದೇವರು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳೋ ಎಂಬಂತೆ ಹಿಡಿಯುವುದಲ್ಲವೆ?</verse>
				<verse number="22">ಒಂದು ವೇಳೆ, “ಇವು ನನಗೆ ಏಕೆ ಸಂಭವಿಸಿದವು?” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ನೆರಿಗೆಯು ಕೀಳಲಾಗುವುದು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.</verse>
				<verse number="23">ಕೂಷ್ಯನು ತನ್ನ ಚರ್ಮವನ್ನೂ, ಚಿರತೆಯು ತನ್ನ ಮಚ್ಚೆಯನ್ನೂ ಮಾರ್ಪಡಿಸುವುದಕ್ಕಾಗುವುದೋ? ಹಾಗಾದರೆ ಕೆಟ್ಟತನದ ಅಭ್ಯಾಸವುಳ್ಳವರಾದ ನೀವೂ ಸಹ ಒಳ್ಳೆಯದನ್ನು ಮಾಡುವುದಕ್ಕಾದೀತೇ?</verse>
				<verse number="24">“ಅಡವಿಯ ಗಾಳಿಯಿಂದ ಹಾರಿಹೋಗುವ ಹೊಟ್ಟಿನಂತೆ ಅವರನ್ನು ಚದರಿಸುವೆನು.</verse>
				<verse number="25">ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನನ್ನನ್ನು ಮರೆತುಬಿಟ್ಟು, ಸುಳ್ಳು ದೇವರುಗಳಲ್ಲಿ ಭರವಸೆಯಿಟ್ಟಿದ್ದೀಯೇ.</verse>
				<verse number="26">ಆದ್ದರಿಂದ ನಾನು ನಿನ್ನ ಬಟ್ಟೆಗಳನ್ನು ನಿನ್ನ ನಾಚಿಕೆ ಕಾಣುವ ಹಾಗೆ, ನಿನ್ನ ಮುಖದ ಮೇಲೆ ಎತ್ತುವೆನು.</verse>
				<verse number="27">ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ನಿನ್ನ ಕೀಳಾದ ವೇಶ್ಯತನವನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯ ಕಾರ್ಯಗಳನ್ನು ಕಂಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ಇನ್ನೆಷ್ಟು ಕಾಲ ನೀನು ಅಶುದ್ಧಳಾಗಿರುವೆ?”</verse>
			</chapter>
			<chapter number="14">
				<verse number="1">ಕ್ಷಾಮವನ್ನು ಕುರಿತು ಯೆರೆಮೀಯನಿಗೆ ಉಂಟಾದ ಯೆಹೋವ ದೇವರ ವಾಕ್ಯವು:</verse>
				<verse number="2">“ಯೆಹೂದವು ದುಃಖಪಡುತ್ತದೆ. ಅವಳ ನಗರಗಳು ಸೊರಗುತ್ತವೆ; ಅವರು ಭೂಮಿಗಾಗಿ ಗೋಳಾಡುತ್ತಾರೆ, ಯೆರೂಸಲೇಮಿನ ಕೂಗು ಏರಿ ಬಂತು.</verse>
				<verse number="3">ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ. ಇವರು ಬಾವಿಗಳಿಗೆ ಬರುತ್ತಾರೆ. ಆದರೆ ನೀರು ಸಿಕ್ಕಲ್ಲ. ಬರೀ ಪಾತ್ರೆಗಳುಳ್ಳವರಾಗಿ ತಿರುಗಿಕೊಳ್ಳುತ್ತಾರೆ. ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ, ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.</verse>
				<verse number="4">ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಿರಾಶರಾಗಿ ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.</verse>
				<verse number="5">ಹೌದು, ಜಿಂಕೆಯು ಸಹ ಹೊಲದಲ್ಲಿ ಹುಲ್ಲು ಇಲ್ಲದ್ದರಿಂದ, ತನ್ನ ಮರಿಯನ್ನು ಹಾಕಿ, ಬಿಟ್ಟು ಬಿಡುತ್ತದೆ.</verse>
				<verse number="6">ಕಾಡುಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು, ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ. ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.”</verse>
				<verse number="7">ಯೆಹೋವ ದೇವರೇ, ನಮ್ಮ ಅಕ್ರಮಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಟ್ಟರೂ, ನೀನೇ ನಿನ್ನ ಹೆಸರಿಗೋಸ್ಕರ ಕಾರ್ಯ ಸಾಧಿಸು. ಏಕೆಂದರೆ, ನಮ್ಮ ಹಿಂಜಾರುವಿಕೆಗಳು ಅನೇಕವಾಗಿವೆ; ನಿಮಗೆ ವಿರೋಧವಾಗಿ ಪಾಪಮಾಡಿದ್ದೇವೆ.</verse>
				<verse number="8">ಓ ಇಸ್ರಾಯೇಲಿನ ನಿರೀಕ್ಷೆಯೇ, ಇಕ್ಕಟ್ಟಿನ ಕಾಲದಲ್ಲಿ ಅವನನ್ನು ರಕ್ಷಿಸುವವರೇ, ನೀನು ಏಕೆ ದೇಶದಲ್ಲಿ ಅನ್ಯನ ಹಾಗೆಯೂ, ರಾತ್ರಿ ಕಳೆಯುವುದಕ್ಕೆ ಇಳಿದುಕೊಳ್ಳುವ ಪ್ರಯಾಣಸ್ಥನ ಹಾಗೆಯೂ ಇರಬೇಕು?</verse>
				<verse number="9">ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವ ದೇವರೇ, ನೀವು ನಮ್ಮ ಮಧ್ಯದಲ್ಲಿರುತ್ತೀರಿ, ನಾವು ನಿಮ್ಮ ಹೆಸರನ್ನು ಹೊಂದಿದ್ದೇವೆ, ನಮ್ಮನ್ನು ಕೈಬಿಡಬೇಡಿರಿ.</verse>
				<verse number="10">ಯೆಹೋವ ದೇವರು ಈ ಜನರಿಗೆ ಹೀಗೆ ಹೇಳುತ್ತಾರೆ: “ಹೀಗೆ ತಿರುಗಾಡುವುದಕ್ಕೆ ಅವರು ಇಷ್ಟಪಡುತ್ತಾರೆ. ತಮ್ಮ ಕಾಲುಗಳನ್ನು ಹಿಂದೆಗೆಯುವುದಿಲ್ಲ. ಆದ್ದರಿಂದ ಯೆಹೋವ ದೇವರು ಅವರನ್ನು ಅಂಗೀಕರಿಸುವುದಿಲ್ಲ. ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವೆನು. ಅವರ ಪಾಪಗಳಿಗಾಗಿ ಅವರನ್ನು ದಂಡಿಸುವೆನು.”</verse>
				<verse number="11">ಆಗ ಯೆಹೋವ ದೇವರು ನನಗೆ, “ಈ ಜನರಿಗೋಸ್ಕರ ಒಳ್ಳೆಯದಕ್ಕಾಗಿ ಪ್ರಾರ್ಥನೆ ಮಾಡಬೇಡ.</verse>
				<verse number="12">ಅವರು ಉಪವಾಸ ಮಾಡಿದರೂ, ನಾನು ಅವರ ಮೊರೆಯನ್ನು ಕೇಳುವುದಿಲ್ಲ. ಅವರು ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವರನ್ನು ಅಂಗೀಕರಿಸುವುದಿಲ್ಲ. ಆದರೆ ನಾನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ,” ಎಂದು ಹೇಳಿದರು.</verse>
				<verse number="13">ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ, ಪ್ರವಾದಿಗಳು ಅವರಿಗೆ: ‘ನೀವು ಖಡ್ಗವನ್ನು ನೋಡುವುದಿಲ್ಲ. ನಿಮಗೆ ಕ್ಷಾಮವು ಬಾರದು. ಆದರೆ ಯೆಹೋವ ದೇವರು ನಿಮಗೆ ಈ ಸ್ಥಳದಲ್ಲಿ ಸ್ಥಿರಸಮಾಧಾನ ಕೊಡುತ್ತಾರೆ,’ ಎಂದು ಹೇಳುತ್ತಾರೆ,” ಎಂದೆನು.</verse>
				<verse number="14">ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳುಗಳನ್ನು ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಆಜ್ಞೆಕೊಡಲಿಲ್ಲ. ಅವರ ಸಂಗಡ ಮಾತಾಡಲಿಲ್ಲ. ಸುಳ್ಳಿನ ದರ್ಶನವನ್ನೂ, ಶಕುನವನ್ನೂ, ಮಾಯ ಮಂತ್ರವನ್ನೂ, ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.</verse>
				<verse number="15">ಆದ್ದರಿಂದ ಯೆಹೋವ ದೇವರು ತಾನು ಕಳುಹಿಸದೆ, ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು, ‘ಈ ದೇಶದಲ್ಲಿ ಖಡ್ಗವೂ ಬರವೂ ಇರುವುದಿಲ್ಲ,’ ಎಂದು ಹೇಳುವಂಥ ಪ್ರವಾದಿಗಳನ್ನು ಕುರಿತು, ಖಡ್ಗದಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.</verse>
				<verse number="16">ಅವರು ಪ್ರವಾದಿಸುವ ಜನರು ಕ್ಷಾಮದ ಮತ್ತು ಖಡ್ಗದ ನಿಮಿತ್ತ ಯೆರೂಸಲೇಮಿನ ಬೀದಿಪಾಲಾಗುವರು. ಅವರನ್ನೂ, ಅವರ ಹೆಂಡತಿಯರನ್ನೂ, ಅವರ ಪುತ್ರಪುತ್ರಿಯರನ್ನೂ ಹೂಳಿಡುವುದಕ್ಕೆ ಯಾರೂ ಇರುವುದಿಲ್ಲ. ಏಕೆಂದರೆ ಅವರಿಗೆ ಅರ್ಹವಾದ ಆಪತ್ತನ್ನು ನಾನು ಅವರ ಮೇಲೆ ಸುರಿಯುತ್ತೇನೆ.</verse>
				<verse number="17">“ಆದ್ದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು. “ ‘ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ. ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ಏಟಿನಿಂದಲೂ, ದೊಡ್ಡ ಪೆಟ್ಟಿನಿಂದಲೂ ಗಾಯಗೊಂಡಿದ್ದಾಳೆ.</verse>
				<verse number="18">ನಾನು ಹೊಲಕ್ಕೆ ಹೋದರೆ ಇಗೋ, ಖಡ್ಗದಿಂದ ಸತ್ತವರು ಕಾಣಿಸುತ್ತಾರೆ. ಪಟ್ಟಣದಲ್ಲಿ ಪ್ರವೇಶಿಸಿದರೆ ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು ಕಾಣಿಸಿಕೊಳ್ಳುತ್ತಾರೆ. ಹೌದು, ಪ್ರವಾದಿಯೂ, ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.’ ”</verse>
				<verse number="19">ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿ ಬಿಟ್ಟಿದ್ದೀಯೋ? ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟು ಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ. ಕ್ಷೇಮ ಕಾಲವನ್ನು ಎದುರು ನೋಡಿದೆವು, ಹಾ, ಅಂಜಿಕೆಯೇ.</verse>
				<verse number="20">ಯೆಹೋವ ದೇವರೇ, ನಮ್ಮ ದುಷ್ಟತನವನ್ನೂ, ನಮ್ಮ ಪಿತೃಗಳ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ, ನಿಮಗೆ ವಿರುದ್ಧವಾಗಿ ಪಾಪಮಾಡಿದ್ದೇವಲ್ಲಾ.</verse>
				<verse number="21">ನಿಮ್ಮ ನಾಮದ ಮೇಲೆ ದೃಷ್ಟಿಯಿಡಿ, ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ, ಅವಮಾನಪಡಿಸಬೇಡಿ. ನೀವು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರಿ.</verse>
				<verse number="22">ಜನಾಂಗಗಳ ವ್ಯರ್ಥ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದ ಮಳೆಗಳನ್ನು ಕೊಟ್ಟೀತೇ? ಅಲ್ಲ, ನೀವೇ, ನಮ್ಮ ದೇವರಾದ ಯೆಹೋವ ದೇವರು, ನೀವೇ ವೃಷ್ಟಿದಾತರು, ನಾವು ನಿಮ್ಮನ್ನೇ ನಿರೀಕ್ಷಿಸುವೆವು, ನೀವು ಇವುಗಳನ್ನೆಲ್ಲಾ ನಡಿಸುವವರಾಗಿದ್ದೀರಷ್ಟೆ.</verse>
			</chapter>
			<chapter number="15">
				<verse number="1">ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಮೋಶೆಯೂ ಸಮುಯೇಲನೂ ನನ್ನ ಮುಂದೆ ನಿಂತರೂ, ನನ್ನ ಮನಸ್ಸು ಈ ಜನರ ಮೇಲೆ ಇರುವುದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿಬಿಡು. ಅವರು ಹೋಗಲಿ.</verse>
				<verse number="2">ಅವರು ನಿನಗೆ, ‘ನಾವು ಎಲ್ಲಿ ಹೋಗಬೇಕು?’ ಎಂದು ಹೇಳಿದರೆ, ನೀನು ಅವರಿಗೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಮರಣಕ್ಕೆ ಇರುವವರು ಮರಣಕ್ಕೆ; ಖಡ್ಗಕ್ಕೆ ಇರುವವರು ಖಡ್ಗಕ್ಕೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ; ಸೆರೆಗೆ ಇರುವವರು ಸೆರೆಗೆ,’ ಎಂದು ಹೇಳಬೇಕು.</verse>
				<verse number="3">“ನಾನು ಅವರಿಗೆ ವಿರೋಧವಾಗಿ ನಾಲ್ಕು ವಿಧವಾದ ವಿನಾಶಗಳನ್ನು ಎಂದರೆ, ಕೊಲ್ಲುವುದಕ್ಕೆ ಖಡ್ಗವನ್ನೂ, ಹರಿಯುವುದಕ್ಕೆ ನಾಯಿಗಳನ್ನು, ನುಂಗುವುದಕ್ಕೂ ನಾಶಮಾಡುವುದಕ್ಕೂ ಆಕಾಶದ ಪಕ್ಷಿಗಳನ್ನೂ, ಕಾಡುಮೃಗಗಳನ್ನೂ ನೇಮಿಸುತ್ತೇನೆ ಎಂಬುದು ಯೆಹೋವ ದೇವರಾದ ನನ್ನ ಮಾತು.</verse>
				<verse number="4">ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯು ಯೆರೂಸಲೇಮಿನಲ್ಲಿ ನಡಿಸಿದ್ದಕ್ಕೆ ಪ್ರತಿಫಲವಾಗಿ ನಾನು ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಂತೆ ಮಾಡುವೆನು.</verse>
				<verse number="5">“ಯೆರೂಸಲೇಮೇ, ನಿನ್ನ ಮೇಲೆ ಯಾರು ಕನಿಕರಪಡುವರು, ನಿನಗೋಸ್ಕರ ಯಾರು ದುಃಖಿಸುವರು? ನಿನ್ನ ಕ್ಷೇಮವನ್ನು ಕುರಿತು ಕೇಳುವುದಕ್ಕೆ ಯಾರು ಹೋಗುವರು?</verse>
				<verse number="6">ನೀನು ನನ್ನನ್ನು ಬಿಟ್ಟುಬಿಟ್ಟಿದ್ದೀ,” ಎಂದು ಯೆಹೋವ ದೇವರು ಹೇಳುತ್ತಾರೆ. “ನೀನು ಹಿಂಜಾರಿದೆ. ಆದ್ದರಿಂದ ನನ್ನ ಕೈಯನ್ನು ನಿನಗೆ ವಿರೋಧವಾಗಿ ಚಾಚಿ, ನಿನ್ನನ್ನು ನಾಶಮಾಡುವೆನು. ನಿನಗೆ ಅನುಕಂಪ ತೋರಿಸುವುದರಲ್ಲಿ ದಣಿದಿದ್ದೇನೆ.</verse>
				<verse number="7">ಅವರನ್ನು ಮೊರದಿಂದ ದೇಶದ ಬಾಗಿಲುಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು. ನನ್ನ ಜನರನ್ನು ನಾಶಮಾಡಿ ಅವರಿಗೆ ಶೋಕವನ್ನು ನೀಡುವೆನು. ಅವರು ತಮ್ಮ ಮಾರ್ಗಗಳನ್ನು ಬಿಟ್ಟು, ಹಿಂದಿರುಗದೆ ಇದ್ದುದರಿಂದ</verse>
				<verse number="8">ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಕಿಗಿಂತ ಹೆಚ್ಚಾಗಿರುವರು, ಯುವಕರ ತಾಯಿಗಳ ಮೇಲೆ ನಾಶ ಮಾಡುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು, ಅವರ ಮೇಲೆ ಕಳವಳವನ್ನೂ, ದಿಗಿಲನ್ನೂ ತಟ್ಟನೆ ಬೀಳಿಸುವೆನು.</verse>
				<verse number="9">ಏಳುಮಂದಿಯನ್ನು ಹೆತ್ತವಳು ಕುಂದುತ್ತಾಳೆ. ತನ್ನ ಪ್ರಾಣವನ್ನು ಬಿಡುತ್ತಾಳೆ. ಹಗಲಿರುವಾಗಲೇ ಅವಳ ಸೂರ್ಯನು ಅಸ್ತಮಿಸುತ್ತಾನೆ. ಅವಳು ನಾಚಿಕೆಪಡುತ್ತಾಳೆ, ಅವಮಾನಗೊಳ್ಳುತ್ತಾಳೆ. ಇದಲ್ಲದೆ ಅವರ ಶೇಷವನ್ನು ಅವರ ಶತ್ರುಗಳ ಮುಂದೆ ಖಡ್ಗಕ್ಕೆ ಒಪ್ಪಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="10">ನನ್ನ ತಾಯಿಯೇ, ನನಗೆ ಕಷ್ಟ! ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ, ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ. ಆದರೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.</verse>
				<verse number="11">ಇದಕ್ಕೆ ಯೆಹೋವ ದೇವರು, ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿಜನಿಜವಾಗಿ ನಿನ್ನ ಶತ್ರುವನ್ನು ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ನಿನಗೆ ಶರಣಾಗತನನ್ನಾಗಿ ಮಾಡುವೆನು.</verse>
				<verse number="12">ಕಬ್ಬಿಣವನ್ನು, ಬಡಗಣ ಕಬ್ಬಿಣವನ್ನು ಯಾರು ಮುರಿದಾರು? ಕಂಚನ್ನು ಮುರಿಯುವುದು ಯಾರಿಂದಾದೀತು? ಎಂದು ಹೇಳಿದನು.</verse>
				<verse number="13">ನಿನ್ನ ಸಕಲ ಪ್ರಾಂತಗಳಲ್ಲಿ ನೀನು ಮಾಡಿದ ಎಲ್ಲಾ ಪಾಪಗಳ ನಿಮಿತ್ತ ನಾನು ನಿನ್ನ ಸೊತ್ತು ಸಂಪತ್ತುಗಳನ್ನು ಲಾಭವಿಲ್ಲದೆ ಸೂರೆಗೆ ಈಡು ಮಾಡಿ,</verse>
				<verse number="14">ನಿನ್ನ ಶತ್ರುಗಳ ಕೈಗೆ ಕೊಟ್ಟು, ನಿನ್ನನ್ನು ಗೊತ್ತಿಲ್ಲದ ದೇಶಕ್ಕೆ ಸಾಗಿಸಿಬಿಡುವೆನು. ನನ್ನ ರೋಷದಿಂದ ಉರಿಯು ಹತ್ತಿಕೊಂಡಿದೆ, ಅದು ನಿಮ್ಮನ್ನು ಸುಟ್ಟುಬಿಡುವುದು.</verse>
				<verse number="15">ಅದಕ್ಕೆ ನಾನು ಯೆಹೋವ ದೇವರೇ, ನೀನೇ ಬಲ್ಲೆ, ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿ ತೀರಿಸು, ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ ಏಕೆಂದರೆ ನೀವು ಕನಿಕರ ಉಳ್ಳವರು, ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಚಿತ್ತಕ್ಕೆ ತಂದುಕೋ.</verse>
				<verse number="16">ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರ ಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವ ದೇವರೇ, ನಾನು ನಿನ್ನ ಹೆಸರಿನವನಲ್ಲವೇ!</verse>
				<verse number="17">ನಾನು ವಿನೋದಗಾರರ ಕೂಟದಲ್ಲಿ ಕೂತುಕೊಳ್ಳಲಿಲ್ಲ, ಉಲ್ಲಾಸ ಪಡಲೂ ಇಲ್ಲ; ನೀವು ನನ್ನ ಮೇಲೆ ಕೈ ಇಟ್ಟಿದ್ದರಿಂದ ಒಂಟಿಗನಾಗಿ ಕೂತುಕೊಂಡೆನು; ನನ್ನನ್ನು ರೋಷದಿಂದ ತುಂಬಿಸಿದ್ದಿಯಷ್ಟೆ;</verse>
				<verse number="18">ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣ ಹೋಗಲೊಲ್ಲದೇಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ? ಎಂದು ಅರಿಕೆಮಾಡಿಕೊಂಡೆನು.</verse>
				<verse number="19">ಆದಕಾರಣ ಯೆಹೋವ ದೇವರು ಹೀಗೆನ್ನುತ್ತಾರೆ: ನೀನು ಮಾನಸಾಂತರಪಟ್ಟರೆ, ನೀನು ನನಗೆ ಸೇವೆಮಾಡುವಂತೆ ನಾನು ನಿನ್ನನ್ನು ಪುನಃಸ್ಥಾಪಿಸುವೆನು. ನೀನು ತುಚ್ಛವಾದವುಗಳಿಗೆ ಬದಲಾಗಿ ಅಮೂಲ್ಯವಾದವುಗಳನ್ನೇ ಮಾತನಾಡುತ್ತಿದ್ದರೆ, ನೀನು ನನ್ನ ಬಾಯಿಯ ಹಾಗಿರುವೆ. ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂದಿರುಗಬೇಡ.</verse>
				<verse number="20">ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ಕಂಚಿನ ಗೋಡೆಯಾಗಿ ಮಾಡುತ್ತೇನೆ. ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಜಯಿಸಲಾರರು. ಏಕೆಂದರೆ ನಾನೇ ನಿನ್ನನ್ನು ರಕ್ಷಿಸುವುದಕ್ಕೂ, ನಿನ್ನನ್ನು ತಪ್ಪಿಸುವುದಕ್ಕೂ ನಿನ್ನ ಸಂಗಡ ಇದ್ದೇನೆ, ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="21">“ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ದುಷ್ಟರ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.”</verse>
			</chapter>
			<chapter number="16">
				<verse number="1">ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ,</verse>
				<verse number="2">“ನೀನು ಮದುವೆಯಾಗಬೇಡ. ನಿನಗೆ ಪುತ್ರರಾಗಲಿ, ಪುತ್ರಿಯರಾಗಲಿ ಈ ಸ್ಥಳದಲ್ಲಿ ಹುಟ್ಟದಿರಲಿ.”</verse>
				<verse number="3">ಏಕೆಂದರೆ ಈ ಸ್ಥಳದಲ್ಲಿ ಹುಟ್ಟಿರುವ ಪುತ್ರಪುತ್ರಿಯರನ್ನು ಕುರಿತು ಮತ್ತು ಅವರ ತಾಯಂದಿರನ್ನೂ, ಅವರನ್ನು ಪಡೆದ ತಂದೆಗಳನ್ನೂ ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ:</verse>
				<verse number="4">“ಅವರು ಮರಣಕರವಾದ ಬೇನೆಗಳಿಂದ ಸಾಯುವರು. ಅವರಿಗೋಸ್ಕರ ಗೋಳಾಟ ಆಗುವುದಿಲ್ಲ. ಅವರಿಗೆ ಸಮಾಧಿಯಾಗುವುದಿಲ್ಲ. ಭೂಮಿಯ ಮೇಲೆ ಅವರು ಗೊಬ್ಬರವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು.”</verse>
				<verse number="5">ಯೆಹೋವ ದೇವರು ಹೀಗೆ ಹೇಳುತ್ತಾರೆ: “ದುಃಖದ ಮನೆಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡುವುದಕ್ಕೂ, ದುಃಖ ಪಡುವುದಕ್ಕೂ ಹೋಗಬೇಡ. ಏಕೆಂದರೆ ನಾನು ನನ್ನ ಸಮಾಧಾನವನ್ನೂ, ಪ್ರೀತಿಯನ್ನೂ, ಕನಿಕರವನ್ನೂ ಈ ಜನರಿಂದ ತೆಗೆದುಹಾಕಿದ್ದೇನೆ.</verse>
				<verse number="6">ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು. ಅವರಿಗೆ ಸಮಾಧಿಯಾಗುವುದಿಲ್ಲ, ಅವರಿಗೋಸ್ಕರ ಯಾರೂ ತಮ್ಮನ್ನು ಕೊಯ್ದುಕೊಳ್ಳುವುದಿಲ್ಲ, ತಮ್ಮ ತಲೆ ಬೋಳಿಸಿಕೊಳ್ಳುವುದೂ ಇಲ್ಲ.</verse>
				<verse number="7">ಸತ್ತವನಿಗಾಗಿ ದುಃಖ ಪಡುವವರನ್ನು ಸಂತೈಸುವುದಕ್ಕೋಸ್ಕರ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ, ತಾಯಿಯನ್ನಾಗಲಿ ಕಳೆದುಕೊಂಡವರಿಗೂ ಕೂಡ ಯಾರೂ ಸಾಂತ್ವನದ ಪಾನಪಾತ್ರೆಯನ್ನು ನೀಡುವುದಿಲ್ಲ.</verse>
				<verse number="8">“ಅವರ ಸಂಗಡ ಕೂತುಕೊಂಡು ಉಣ್ಣುವುದಕ್ಕೂ ಕುಡಿಯುವುದಕ್ಕೂ ಔತಣದ ಮನೆಯಲ್ಲಿ ಪ್ರವೇಶಿಸಬೇಡ.</verse>
				<verse number="9">ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸದ ಸ್ವರವನ್ನೂ, ಸಂತೋಷದ ಸ್ವರವನ್ನೂ, ಮದುಮಗನ ಸ್ವರವನ್ನೂ, ಮದುಮಗಳ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿಬಿಡುವೆನು.</verse>
				<verse number="10">“ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ, ‘ಏಕೆ ಯೆಹೋವ ದೇವರು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಮಾತಾಡಿದ್ದಾರೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಮಾಡಿರುವ ಪಾಪವೇನು?’ ಎಂದು ಹೇಳಿದರೆ, ನೀನು ಅವರಿಗೆ ಹೀಗೆ ಹೇಳಬೇಕು:</verse>
				<verse number="11">‘ನಿಮ್ಮ ಪಿತೃಗಳು ನನ್ನನ್ನು ಬಿಟ್ಟುಬಿಟ್ಟದ್ದರಿಂದಲೇ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಅವರು ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳನ್ನು ಆರಾಧಿಸಿ, ನನ್ನನ್ನು ತೊರೆದುಬಿಟ್ಟು, ನನ್ನ ನಿಯಮವನ್ನು ಕೈಗೊಳ್ಳಲಿಲ್ಲ.</verse>
				<verse number="12">ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ. ಏಕೆಂದರೆ ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ.</verse>
				<verse number="13">ಆದ್ದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ, ನಿಮಗೂ, ನಿಮ್ಮ ಪಿತೃಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು. ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆ ಮಾಡುವಿರಿ ಮತ್ತು ನಾನು ನಿಮಗೆ ಕನಿಕರ ತೋರಿಸುವುದಿಲ್ಲ.’</verse>
				<verse number="14">“ಆದ್ದರಿಂದ ಇಗೋ, ಯೆಹೋವ ದೇವರು ಹೇಳುವುದೇನೆಂದರೆ: ‘ಇಗೋ, ಇಸ್ರಾಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಇನ್ನು ಹೇಳುವುದಿಲ್ಲ.</verse>
				<verse number="15">‘ಆದರೆ ಯೆಹೋವ ದೇವರ ಜೀವದಾಣೆ, ಇಸ್ರಾಯೇಲರನ್ನು ಉತ್ತರ ದೇಶದಿಂದಲೂ, ನಾನು ಅವರನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ ಬರಮಾಡಿ, ನಾನು ಅವರ ಪಿತೃಗಳಿಗೆ ಕೊಟ್ಟಂಥ ಅವರ ದೇಶಕ್ಕೆ ಅವರನ್ನು ತಿರುಗಿ ಬರಮಾಡುವೆನು,’ ಎಂದು ಹೇಳುವ ದಿನಗಳು ಬರುವುವು.</verse>
				<verse number="16">“ಇಗೋ, ನಾನು ಅನೇಕ ಮೀನುಗಾರರನ್ನು ಕಳುಹಿಸುತ್ತೇನೆ. ಇವರು ಅವರನ್ನು ಹಿಡಿಯುವರು. ಆಮೇಲೆ ಅನೇಕ ಬೇಟೆಗಾರರನ್ನು ಕಳುಹಿಸುವೆನು. ಇವರು ಎಲ್ಲಾ ಬೆಟ್ಟಗಳ ಮೇಲೆಯೂ, ಎಲ್ಲಾ ಗುಡ್ಡಗಳ ಮೇಲೆಯೂ, ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡುವರು.</verse>
				<verse number="17">ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಇವೆ. ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ, ಅವರ ಅಕ್ರಮವು ನನ್ನ ದೃಷ್ಟಿಗೆ ಅಡಗಿರುವುದಿಲ್ಲ.</verse>
				<verse number="18">ಆದರೆ ಮೊದಲು ನಾನು ಅವರ ಅಕ್ರಮಕ್ಕೂ, ಅವರ ಪಾಪಕ್ಕೂ ಎರಡಷ್ಟು ಪ್ರತಿಫಲ ಕೊಡುತ್ತೇನೆ. ಅವರು ನನ್ನ ದೇಶವನ್ನು ತಮ್ಮ ದುಷ್ಕೃತ್ಯಗಳಿಂದ ಅಪವಿತ್ರ ಮಾಡಿ, ನನ್ನ ಸೊತ್ತನ್ನು ತಮ್ಮ ಅಸಹ್ಯ ವಿಗ್ರಹಗಳಿಂದ ತುಂಬಿಸಿದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="19">ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು. “ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ. ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ.</verse>
				<verse number="20">ಮನುಷ್ಯನು ದೇವರುಗಳನ್ನು ತನಗೆ ಮಾಡುವುದುಂಟೇ? ಹಾಗೆ ಮಾಡಿಕೊಂಡರೂ ಅವು ದೇವರುಗಳಲ್ಲ!”</verse>
				<verse number="21">“ಆದ್ದರಿಂದ ಇಗೋ, ನಾನು ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ, ನನ್ನ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಯೆಹೋವ ದೇವರೇ, ಎಂದು ಅವರು ತಿಳಿದುಕೊಳ್ಳುವರು.</verse>
			</chapter>
			<chapter number="17">
				<verse number="1">“ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ, ವಜ್ರದ ಮೊನೆಯಿಂದಲೂ ಬರೆಯಲಾಗಿದೆ. ಅದು ಅವರ ಹೃದಯದ ಹಲಗೆಯ ಮೇಲೆಯೂ ಅವರ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲಾಗಿದೆ.</verse>
				<verse number="2">ಅವರ ಮಕ್ಕಳು ಅವರ ಬಲಿಪೀಠಗಳನ್ನೂ ಹಸಿರಾದ ಗಿಡಗಳಲ್ಲಿಯೂ ಎತ್ತರವಾದ ಗುಡ್ಡಗಳ ಮೇಲೆಯೂ ಇರುವ ಅವರ ಅಶೇರ ಸ್ತಂಭಗಳನ್ನೂ ಜ್ಞಾಪಕ ಮಾಡಿಕೊಳ್ಳುತ್ತಾರಲ್ಲಾ.</verse>
				<verse number="3">ನಾಡಿನಲ್ಲಿರುವ ನನ್ನ ಪರ್ವತವೇ, ನಿನ್ನ ಎಲ್ಲಾ ಪ್ರಾಂತಗಳಲ್ಲಿ ಪಾಪಕ್ಕಾಗಿರುವ ನಿನ್ನ ಉನ್ನತ ಪೂಜಾಸ್ಥಳಗಳನ್ನೂ ನಾನು ಕೊಳ್ಳೆಗೆ ಒಪ್ಪಿಸುವೆನು.</verse>
				<verse number="4">ಆಗ ನಿನ್ನ ದೋಷದಿಂದಲೇ ನೀನು ನಾನು ನಿನಗೆ ಕೊಟ್ಟ ಸೊತ್ತನ್ನು ಬಿಟ್ಟು ಬಿಡುವೆ. ನಿನಗೆ ತಿಳಿಯದ ದೇಶದಲ್ಲಿ ನಿನ್ನನ್ನು ನಿನ್ನ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ಏಕೆಂದರೆ ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ. ಅದು ನಿತ್ಯವೂ ಪ್ರಜ್ವಲಿಸುತ್ತಿರುವುದು.”</verse>
				<verse number="5">ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾನವನ ಸಾಮರ್ಥ್ಯಗಳನ್ನು ತನ್ನ ಆಧಾರವಾಗಿ ಮಾಡಿಕೊಂಡ ವ್ಯಕ್ತಿ ಶಾಪಗ್ರಸ್ತ, ಅವನು ಮನುಷ್ಯನ ಶಕ್ತಿಯ ಮೇಲೆ ಭರವಸೆ ಇಡುವನು. ಯೆಹೋವ ದೇವರ ಕಡೆಯಿಂದ ಯಾವನ ಹೃದಯವು ತೊಲಗುವುದೋ, ಅವನು ಶಾಪಗ್ರಸ್ತನು.</verse>
				<verse number="6">ಅವನು ಅಡವಿಯಲ್ಲಿರುವ ಜಾಲಿ ಗಿಡದ ಹಾಗಿರುವನು. ಒಳ್ಳೆಯದು ಬರುವಾಗ ನೋಡದೆ ಇರುವನು. ನಿವಾಸಿಗಳಿಲ್ಲದ ಚೌಳು ನೆಲವಾಗಿರುವ ಮರುಭೂಮಿಯ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.</verse>
				<verse number="7">“ಯಾವನು ಯೆಹೋವ ದೇವರಲ್ಲಿ ನಂಬಿಕೆ ಇಟ್ಟಿರುವನೋ, ಯಾವನಿಗೆ ಯೆಹೋವ ದೇವರು ಭರವಸೆಯಾಗಿದ್ದಾನೋ, ಆ ಮನುಷ್ಯನು ಧನ್ಯನು.</verse>
				<verse number="8">ಏಕೆಂದರೆ ಅವನು ನೀರಿನ ಬಳಿಯಲ್ಲಿ ನೆಡಲಾದ, ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು. ಬಿಸಿಲಿನ ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ. ಬರಗಾಲದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಸಮಾನನಾಗಿರುವನು.”</verse>
				<verse number="9">ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾಗಿಯೂ ಗುಣಪಡಿಸಲು ಅಸಾಧ್ಯವಾದದ್ದೂ ಆಗಿದೆ. ಅದನ್ನು ತಿಳಿಯುವವನ್ಯಾರು?</verse>
				<verse number="10">“ಯೆಹೋವ ದೇವರಾದ ನಾನೇ ಹೃದಯವನ್ನು ಪರೀಕ್ಷಿಸುತ್ತೇನೆ. ಅಂತರಿಂದ್ರಿಯಗಳನ್ನು ಶೋಧಿಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ, ಅವನ ಕ್ರಿಯೆಗಳ ಫಲದ ಪ್ರಕಾರವೂ ಪ್ರತಿಫಲ ಕೊಡುತ್ತೇನೆ.”</verse>
				<verse number="11">ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಹಾಗೆ, ಅನ್ಯಾಯವಾಗಿ ಐಶ್ವರ್ಯವನ್ನು ಸಂಪಾದಿಸುವವನು ಹಾಗೆಯೇ ಇದ್ದಾನೆ. ಅವನು ತನ್ನ ಮಧ್ಯಪ್ರಾಯದಲ್ಲಿ ಅದನ್ನು ಬಿಡುವನು. ತನ್ನ ಅಂತ್ಯದಲ್ಲಿ ಅವನು ಮೂರ್ಖನೆಂದು ಸಾಬೀತಾಗುತ್ತದೆ.</verse>
				<verse number="12">ಆದಿಯಿಂದ ಮಹಿಮೆಯುಳ್ಳ ಉನ್ನತ ಸಿಂಹಾಸನವು ನಮ್ಮ ಪರಿಶುದ್ಧ ಸ್ಥಳವಾಗಿದೆ.</verse>
				<verse number="13">ಇಸ್ರಾಯೇಲಿನ ನಿರೀಕ್ಷೆಯಾದ ಓ ಯೆಹೋವ ದೇವರೇ, ನಿಮ್ಮನ್ನು ತೊರೆದುಬಿಟ್ಟವರೆಲ್ಲರೂ ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಯೆಹೋವ ದೇವರಿಂದ ತೊಲಗಿ ಹೋದವರನ್ನು ಧೂಳಿನಲ್ಲಿ ಬರೆಯಲಾಗುತ್ತದೆ.</verse>
				<verse number="14">ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿ, ಆಗ ಸ್ವಸ್ಥವಾಗುವೆನು. ನನ್ನನ್ನು ರಕ್ಷಿಸು, ಆಗ ರಕ್ಷಿತನಾಗುವೆನು. ಏಕೆಂದರೆ, ನೀವೇ ನನಗೆ ಸ್ತುತ್ಯರು.</verse>
				<verse number="15">ಇಗೋ, ಅವರು ನನಗೆ, “ಯೆಹೋವ ದೇವರ ವಾಕ್ಯವು ಎಲ್ಲಿ? ಅದು ಈಗ ನೆರವೇರಲಿ,” ಅನ್ನುತ್ತಾರೆ.</verse>
				<verse number="16">ನಾನಾದರೋ ಸಭಾಪಾಲನೆಯಲ್ಲಿ ನಿಮ್ಮನ್ನು ಹಿಂಬಾಲಿಸುವುದನ್ನು ಬಿಡುವುದಕ್ಕೆ ಆತುರಪಡಲಿಲ್ಲ; ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ನೀವೇ ಬಲ್ಲೆ; ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.</verse>
				<verse number="17">ನೀವು ನನ್ನನ್ನು ಭಯಪಡಿಸಬೇಡಿ. ಕೇಡಿನ ದಿನದಲ್ಲಿ ನೀವೇ ನನ್ನ ಆಶ್ರಯವಾಗಿದ್ದೀರಿ.</verse>
				<verse number="18">ನನ್ನನ್ನು ಹಿಂಸಿಸುವವರು ನಾಚಿಕೆಗೆ ಗುರಿಯಾಗಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲು ಪಡಲಿ; ಆದರೆ ನಾನು ದಿಗಿಲು ಪಡದಿರಲಿ. ಆದರೆ ನಾನು ದಿಗಿಲು ಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡಿ. ಎರಡರಷ್ಟಾದ ನಾಶದಿಂದ ಅವರನ್ನು ನಾಶಪಡಿಸಿ.</verse>
				<verse number="19">ಯೆಹೋವ ದೇವರು ನನಗೆ, “ಹೋಗಿ, ಯೆಹೂದದ ಅರಸರು ಪ್ರವೇಶಿಸುವ, ಹೊರಡುವ ಜನರ ಬಾಗಿಲಲ್ಲಿಯೂ, ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು,</verse>
				<verse number="20">ಅವರಿಗೆ ಹೀಗೆ ಹೇಳು: ‘ಯೆಹೂದದ ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ.</verse>
				<verse number="21">ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಮಗೆ ನೀವೇ ಎಚ್ಚರಿಕೆಯಾಗಿರಿ. ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತೆಗೆದುಕೊಂಡು ಬರಬೇಡಿರಿ.</verse>
				<verse number="22">ಸಬ್ಬತ್ ದಿನದಲ್ಲಿ ಹೊರೆಯನ್ನು ನಿಮ್ಮ ಮನೆಗಳಿಂದ ತೆಗೆದುಕೊಂಡು ಹೋಗಬೇಡಿರಿ. ಯಾವ ಕೆಲಸವನ್ನೂ ಮಾಡಬೇಡಿರಿ. ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ ಪ್ರಕಾರವೇ, ಸಬ್ಬತ್ ದಿನವನ್ನು ಪರಿಶುದ್ಧವಾಗಿಡಬೇಕು.</verse>
				<verse number="23">ಆದರೆ ಅವರು ವಿಧೇಯರಾಗಲಿಲ್ಲ, ಕಿವಿಗೊಟ್ಟು ಕೇಳಲಿಲ್ಲ. ಆದರೆ ವಿಧೇಯರಾಗದ ಹಾಗೆಯೂ, ಉಪದೇಶ ಹೊಂದದ ಹಾಗೆಯೂ ಹಟಮಾರಿಯಾಗಿದ್ದರು.</verse>
				<verse number="24">ಯೆಹೋವ ದೇವರಾದ ನನ್ನ ನುಡಿ ಇದೇ: ನೀವು ನನ್ನನ್ನು ಜಾಗ್ರತೆಯಿಂದ ಕೇಳಿ, ಸಬ್ಬತ್ ದಿನದಲ್ಲಿ, ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತೆಗೆದುಕೊಂಡು ಬಾರದೆ, ಸಬ್ಬತ್ ದಿನದಲ್ಲಿ ಯಾವುದೊಂದು ಕೆಲಸಮಾಡದೆ ಪರಿಶುದ್ಧಮಾಡಿದರೆ,</verse>
				<verse number="25">ದಾವೀದನ ಸಿಂಹಾಸನದ ಮೇಲೆ ಕೂರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ, ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು, ಯೆಹೂದದ ಮನುಷ್ಯರಾಗಿಯೂ, ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು, ಅವರೂ, ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು. ಈ ಪಟ್ಟಣದಲ್ಲಿ ಎಂದೆಂದಿಗೂ ವಾಸಮಾಡಿದರು.</verse>
				<verse number="26">ಇದಲ್ಲದೆ ಯೆಹೂದದ ಪಟ್ಟಣಗಳಿಂದಲೂ, ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ, ಬೆನ್ಯಾಮೀನನ ದೇಶದಿಂದಲೂ, ಬಯಲಿನಿಂದಲೂ, ಬೆಟ್ಟಗಳಿಂದಲೂ, ದಕ್ಷಿಣದಿಂದಲೂ ದಹನಬಲಿಗಳನ್ನೂ, ಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ, ಧೂಪವನ್ನೂ ತರುವರು. ಸ್ತೋತ್ರದ ಅರ್ಪಣೆಗಳನ್ನು ಯೆಹೋವ ದೇವರ ಆಲಯಕ್ಕೆ ತರುವರು.</verse>
				<verse number="27">ಆದರೆ ನೀವು ಸಬ್ಬತ್ ದಿನವನ್ನು ಪರಿಶುದ್ಧಮಾಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು, ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದರೆ ಯೆರೂಸಲೇಮಿನ ದ್ವಾರಗಳಲ್ಲಿ ಬೆಂಕಿಯನ್ನು ಹಚ್ಚುವೆನು. ಅದು ಆರಿಹೋಗದೆ, ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.’ ”</verse>
			</chapter>
			<chapter number="18">
				<verse number="1">ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ,</verse>
				<verse number="2">“ನೀನು ಎದ್ದು ಕುಂಬಾರನ ಮನೆಗೆ ಇಳಿದು ಹೋಗು. ಅಲ್ಲಿ ನಿನಗೆ ನನ್ನ ವಾಕ್ಯಗಳನ್ನು ಕೊಡುತ್ತೇನೆ,” ಎಂದರು.</verse>
				<verse number="3">ಆಗ ನಾನು ಕುಂಬಾರನ ಮನೆಗೆ ಇಳಿದು ಹೋದೆನು. ಇಗೋ, ಅವನು ಚಕ್ರದ ಮೇಲೆ ಕೆಲಸ ಮಾಡುತ್ತಿದ್ದನು.</verse>
				<verse number="4">ಅವನು ಮಣ್ಣಿನಿಂದ ಮಾಡಿದ ಪಾತ್ರೆ ಕುಂಬಾರನ ಕೈಯಲ್ಲಿ ಕೆಟ್ಟು ಹೋಯಿತು. ಆಗ ಕುಂಬಾರನಿಗೆ ಒಳ್ಳೆಯದೆಂದು ತೋರುವ ಪ್ರಕಾರ, ಅದನ್ನು ಮತ್ತೊಂದು ಪಾತ್ರೆಯನ್ನಾಗಿ ಮಾಡಿದನು.</verse>
				<verse number="5">ಅನಂತರ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ,</verse>
				<verse number="6">“ಈ ಇಸ್ರಾಯೇಲಿನ ಮನೆತನದವರೇ, ನಾನು ಈ ಕುಂಬಾರನ ಹಾಗೆ ನಿಮಗೆ ಮಾಡಲಾರೆನೇ, ಎಂದು ಯೆಹೋವ ದೇವರು ಅನ್ನುತ್ತಾರೆ. ಇಗೋ, ಕುಂಬಾರನ ಕೈಯಲ್ಲಿ ಮಣ್ಣು ಹೇಗೋ ಹಾಗೆಯೇ, ಓ ಇಸ್ರಾಯೇಲಿನ ಮನೆತನದವರೇ, ನನ್ನ ಕೈಯಲ್ಲಿ ನೀವು ಇದ್ದೀರಿ.</verse>
				<verse number="7">ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿ ಮತ್ತು ಒಂದು ರಾಜ್ಯದ ವಿಷಯವಾಗಿ ಅದನ್ನು ಕೀಳುವುದಕ್ಕೂ ಕೆಡವುದಕ್ಕೂ ನಾಶಮಾಡುವುದಕ್ಕೂ ಮಾತಾಡುತ್ತೇನೋ,</verse>
				<verse number="8">ನಾನು ಆ ಜನಾಂಗಕ್ಕೆ ವಿರೋಧವಾಗಿ ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ, ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಮನಸ್ಸನ್ನು ಬದಲಾಯಿಸುವೆನು.</verse>
				<verse number="9">ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವುದಕ್ಕೂ, ನೆಡುವುದಕ್ಕೂ ಮಾತನಾಡುತ್ತೇನೋ,</verse>
				<verse number="10">ನನ್ನ ಸ್ವರಕ್ಕೆ ವಿಧೇಯವಾಗದೆ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರೆ, ನಾನು ಅದಕ್ಕೆ ಉಪಕಾರ ಮಾಡುತ್ತೇನೆಂದು ಹೇಳಿದ ಒಳ್ಳೆಯದನ್ನು ಕುರಿತು ಮನಸ್ಸನ್ನು ಬದಲಾಯಿಸುವೆನು.</verse>
				<verse number="11">“ಹೀಗಿರುವುದರಿಂದ ಈಗ ಯೆಹೂದದ ಮನುಷ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ. ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ. ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂದಿರುಗಿರಿ. ನಿಮ್ಮ ಮಾರ್ಗಗಳನ್ನೂ, ನಿಮ್ಮ ಕ್ರಿಯೆಗಳನ್ನೂ ಒಳ್ಳೆಯದಾಗಿ ಮಾಡಿರಿ.</verse>
				<verse number="12">ಆದರೆ ಅವರೋ ಏನೂ ಪ್ರಯೋಜನ ಇಲ್ಲ. ಏಕೆಂದರೆ ಸ್ವಂತ ಆಲೋಚನೆಗಳ ಪ್ರಕಾರ ನಡೆದುಕೊಳ್ಳುವೆವು. ನಾವೆಲ್ಲರೂ ನಮ್ಮ ದುಷ್ಟ ಹೃದಯದ ಮೊಂಡುತನವನ್ನು ಅನುಸರಿಸುತ್ತೇವೆ,’ ಎಂದರು.”</verse>
				<verse number="13">ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: “ಇತರ ಜನಾಂಗಗಳಲ್ಲಿ ವಿಚಾರಿಸಿರಿ. ಇಂಥವುಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾ ಭಯಂಕರವಾದದ್ದನ್ನು ಮಾಡಿದ್ದಾಳೆ.</verse>
				<verse number="14">ಹೊಲದ ಬಂಡೆಯಿಂದ ಬರುವ ಲೆಬನೋನಿನ ಹಿಮವು ತಪ್ಪುವುದೇ? ದೂರದಿಂದ ಇಳಿದು ಹರಿಯುವ ತಂಪಾದ ಪ್ರವಾಹದ ನೀರು ಬತ್ತುವುದೇ?</verse>
				<verse number="15">ನನ್ನ ಜನರಾದರೋ ನನ್ನನ್ನು ಮರೆತುಬಿಟ್ಟಿದ್ದಾರೆ. ವ್ಯರ್ಥವಾದ ವಿಗ್ರಹಗಳಿಗೆ ಧೂಪವನ್ನರ್ಪಿಸಿದ್ದಾರೆ. ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವುವಂತೆ ಮಾಡಿ, ಮಾರ್ಗವಲ್ಲದ ಕಾಲು ದಾರಿಗಳಲ್ಲಿ ಅವರನ್ನು ನಡೆಯುವಂತೆ ಮಾಡಿವೆ.</verse>
				<verse number="16">ಹೀಗೆ ತಮ್ಮ ದೇಶವನ್ನು ಹಾಳಾಗಿಯೂ, ನಿತ್ಯವಾದ ಹಾಸ್ಯಾಸ್ಪದವಾಗಿಯೂ ಮಾಡಿದ್ದಾರೆ. ಅದನ್ನು ಹಾದುಹೋಗುವವರೆಲ್ಲರೂ ವಿಸ್ಮಿತರಾಗಿ ತಲೆ ಅಲ್ಲಾಡಿಸುವರು.</verse>
				<verse number="17">ಮೂಡಣ ಗಾಳಿಯಿಂದ ಆದ ಹಾಗೆ, ಅವರನ್ನು ಶತ್ರುವಿನ ಮುಂದೆ ಚದರಿಸುವೆನು. ಅವರ ಆಪತ್ತಿನ ದಿವಸದಲ್ಲಿ ಅವರಿಗೆ ಮುಖವನ್ನಲ್ಲ ಬೆನ್ನನ್ನು ತೋರಿಸುವೆನು.”</verse>
				<verse number="18">ಆಗ ಜನರು, “ಬನ್ನಿರಿ, ಯೆರೆಮೀಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ. ಯಾಜಕನಿಂದ ನಿಯಮ ಬೋಧನೆಯೂ, ಜ್ಞಾನಿಯಿಂದ ಆಲೋಚನೆಯೂ, ಪ್ರವಾದಿಯಿಂದ ವಾಕ್ಯವೂ ನಿಂತುಹೋಗುವುದಿಲ್ಲ. ಬನ್ನಿರಿ, ನಾಲಿಗೆಯಿಂದ ಅವನನ್ನು ಆಕ್ರಮಿಸೋಣ. ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ,” ಎಂದು ಹೇಳಿದರು.</verse>
				<verse number="19">ಓ ಯೆಹೋವ ದೇವರೇ, ನನಗೆ ಕಿವಿಗೊಡು. ನನ್ನ ಸಂಗಡ ವ್ಯಾಜ್ಯವಾಡುವವರ ಮಾತನ್ನು ಕೇಳು.</verse>
				<verse number="20">ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಏಕೆಂದರೆ, ಅವರು ನನ್ನ ಪ್ರಾಣಕ್ಕೆ ಕುಳಿಯನ್ನು ಅಗೆದಿದ್ದಾರೆ. ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವುದಕ್ಕೂ, ನಿನ್ನ ಉಗ್ರವನ್ನು ಅವರಿಂದ ತಿರುಗಿಸುವುದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.</verse>
				<verse number="21">ಆದ್ದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು. ಖಡ್ಗದ ಬಲದಿಂದ ಅವರ ರಕ್ತವನ್ನು ಸುರಿದುಬಿಡು. ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ. ಅವರ ಗಂಡಸರು ಹತರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗಕ್ಕೆ ತುತ್ತಾಗಲಿ.</verse>
				<verse number="22">ನೀನು ಅಕಸ್ಮಾತ್ತಾಗಿ ಅವರ ಮೇಲೆ ಸೈನ್ಯವನ್ನು ತರಿಸುವಾಗ, ಕೂಗು ಅವರ ಮನೆಗಳೊಳಗಿಂದ ಕೇಳ ಬರಲಿ. ಏಕೆಂದರೆ, ನನ್ನನ್ನು ಹಿಡಿಯುವುದಕ್ಕೆ ಕುಳಿ ಅಗೆದಿದ್ದಾರೆ. ನನ್ನ ಕಾಲುಗಳಿಗೆ ಉರುಲುಗಳನ್ನು ಒಡ್ಡಿದ್ದಾರೆ.</verse>
				<verse number="23">ಆದರೂ ಯೆಹೋವ ದೇವರೇ, ಅವರು ನನ್ನನ್ನು ಸಾಯಿಸುವುದಕ್ಕೆ ನನಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೆಲ್ಲಾ ನೀವು ಬಲ್ಲಿರಿ. ಅವರ ಅಕ್ರಮವನ್ನು ಮನ್ನಿಸಬೇಡಿ. ಅವರ ಪಾಪಗಳನ್ನು ನಿನ್ನ ಸನ್ನಿಧಿಯೊಳಗಿಂದ ಅಳಿಸಿಬಿಡಬೇಡಿರಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪದ ಕಾಲದಲ್ಲಿ ಅವರಿಗೆ ತಕ್ಕದ್ದನ್ನು ಮಾಡಿರಿ.</verse>
			</chapter>
			<chapter number="19">
				<verse number="1">ಯೆಹೋವ ದೇವರು ನನಗೆ ಹೀಗೆಂದನು: “ಹೋಗಿ, ಕುಂಬಾರನ ಮಣ್ಣಿನ ಮಡಕೆಯನ್ನು ತೆಗೆದುಕೊಂಡು, ಜನರ ಹಿರಿಯರಿಂದಲೂ, ಯಾಜಕರ ಹಿರಿಯರಿಂದಲೂ ಕೆಲವರನ್ನು ಕರೆದುಕೊಂಡು,</verse>
				<verse number="2">ಮುರಿದ ಪಾತ್ರೆಗಳ ಪ್ರವೇಶದ್ವಾರದ ಮೂಲಕ ಬೆನ್ ಹಿನ್ನೋಮ್ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು.</verse>
				<verse number="3">‘ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ. ಅದನ್ನು ಕೇಳುವವರೆಲ್ಲರ ಕಿವಿಗೆ ಜುಮ್ಮೆನ್ನುವುದು.</verse>
				<verse number="4">ಏಕೆಂದರೆ ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಅಶುದ್ಧಮಾಡಿ; ಅವರೂ, ಅವರ ತಂದೆಗಳೂ, ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪ ಸುಟ್ಟು, ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತದಿಂದ ತುಂಬಿಸಿ,</verse>
				<verse number="5">ತಮ್ಮ ಮಕ್ಕಳನ್ನು ಬಾಳನಿಗೆ ದಹನಬಲಿಗಳಾಗಿ ಬೆಂಕಿಯಲ್ಲಿ ಸುಡುವುದಕ್ಕೆ ಬಾಳನ ಉನ್ನತ ಪೂಜಾಸ್ಥಳಗಳನ್ನು ಕಟ್ಟಿದ್ದಾರೆ. ಇಂಥಾದ್ದನ್ನು ನಾನು ಆಜ್ಞಾಪಿಸಲಿಲ್ಲ. ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ.</verse>
				<verse number="6">ಹೀಗಿರುವುದರಿಂದ ಯೆಹೋವ ದೇವರು ಹೇಳುವುದೇನೆಂದರೆ: ಇಗೋ, ದಿನಗಳು ಬರುವುವು. ಆಗ ಈ ಸ್ಥಳವು ಇನ್ನು ತೋಫೆತೆಂದು ಇಲ್ಲವೆ ಬೆನ್ ಹಿನ್ನೋಮ್ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲಾಗುವುದು.</verse>
				<verse number="7">“ ‘ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು. ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಿಂದಲೂ ಅವರನ್ನು ಖಡ್ಗದಿಂದ ಬೀಳುವಂತೆ ಮಾಡುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು.</verse>
				<verse number="8">ಈ ಪಟ್ಟಣವನ್ನು ಭಯಾನಕವಾಗಿಯೂ, ಹಾಸ್ಯಾಸ್ಪದವಾಗಿಯೂ ಮಾಡುವೆನು. ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು.</verse>
				<verse number="9">ಅವರು ತಮ್ಮ ಪುತ್ರಪುತ್ರಿಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು. ಮುತ್ತಿಗೆಯಲ್ಲಿಯೂ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.’</verse>
				<verse number="10">“ಆಗ ನೀನು, ನಿನ್ನ ಸಂಗಡ ಬಂದ ಮನುಷ್ಯರ ಮುಂದೆ ಆ ಮಡಕೆಯನ್ನು ಒಡೆದು,</verse>
				<verse number="11">ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ಯಾವ ಪ್ರಕಾರ ಒಬ್ಬನು ಕುಂಬಾರನ ಮಡಕೆಯನ್ನು ಅದು ತಿರುಗಿ ಒಂದುಗೂಡದ ಹಾಗೆ ಒಡೆಯುತ್ತಾನೋ, ಅದೇ ಪ್ರಕಾರ ನಾನು ಈ ಜನರನ್ನೂ, ಈ ಪಟ್ಟಣವನ್ನೂ ಒಡೆದುಬಿಡುವೆನು. ಆಗ ಹೂಳಿಡುವುದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಳಿಡುವರು.</verse>
				<verse number="12">ಹೀಗೆ ಈ ಸ್ಥಳಕ್ಕೂ, ಅದರ ನಿವಾಸಿಗಳಿಗೂ ಮಾಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು.</verse>
				<verse number="13">ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪ ಸುಟ್ಟು, ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯ್ದಿದ್ದಾರೋ, ಆ ಎಲ್ಲಾ ಮನೆಗಳ ನಿಮಿತ್ತವಾಗಿ ಯೆರೂಸಲೇಮಿನ ಮನೆಗಳೂ, ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವುವು, ಎಂಬುದೇ.’ ”</verse>
				<verse number="14">ಆಗ ಯೆರೆಮೀಯನು, ಯೆಹೋವ ದೇವರು ಅವನನ್ನು ಪ್ರವಾದಿಸುವುದಕ್ಕೆ ಕಳುಹಿಸಿದ ತೋಫೆತಿನಿಂದ ಬಂದು ಯೆಹೋವ ದೇವರ ಆಲಯದ ಅಂಗಳದಲ್ಲಿ ನಿಂತುಕೊಂಡು, ಜನರಿಗೆಲ್ಲಾ ಹೇಳಿದ್ದೇನೆಂದರೆ:</verse>
				<verse number="15">“ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾನೆ: ‘ಇಗೋ, ನಾನು ಈ ಪಟ್ಟಣದ ಮೇಲೆಯೂ, ಅದರ ಎಲ್ಲಾ ಊರುಗಳ ಮೇಲೆಯೂ, ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ತರಿಸುತ್ತೇನೆ. ಏಕೆಂದರೆ ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಹೃದಯಗಳನ್ನು ಕಠಿಣ ಮಾಡಿಕೊಂಡಿದ್ದಾರೆ, ಎಂಬುದೇ.’ ”</verse>
			</chapter>
			<chapter number="20">
				<verse number="1">ಯೆರೆಮೀಯನು ಈ ಮಾತುಗಳನ್ನು ಪ್ರವಾದಿಸಲಾಗಿ, ಯೆಹೋವ ದೇವರ ಆಲಯದಲ್ಲಿ ಮುಖ್ಯ ಅಧಿಕಾರಿಯಾಗಿದ್ದ ಯಾಜಕನಾದ ಇಮ್ಮೇರನ ಮಗ ಪಷ್ಹೂರನು ಕೇಳಿದನು.</verse>
				<verse number="2">ಆಗ ಪಷ್ಹೂರನು ಪ್ರವಾದಿಯಾದ ಯೆರೆಮೀಯನನ್ನು ಹೊಡೆದು, ಅವನನ್ನು ಯೆಹೋವ ದೇವರ ಆಲಯದ ಬಳಿಯಲ್ಲಿದ್ದ ಬೆನ್ಯಾಮೀನನ ಮೇಲ್ಭಾಗದಲ್ಲಿದ್ದ ಬಾಗಿಲಲ್ಲಿದ್ದ ಮರದ ಉಪಕರಣಕ್ಕೆ ಕಟ್ಟಿದರು.</verse>
				<verse number="3">ಮಾರನೆ ದಿವಸದಲ್ಲಿ, ಪಷ್ಹೂರನು ಯೆರೆಮೀಯನನ್ನು ಬಂಧನದಿಂದ ಬಿಡಿಸಿದನು. ಆಗ ಯೆರೆಮೀಯನು ಅವನಿಗೆ, “ಯೆಹೋವ ದೇವರು ನಿನಗೆ ಇನ್ನು ಪಷ್ಹೂರನೆಂಬ ಹೆಸರಿನಿಂದಲ್ಲ ಮಾಗೋರ್ ಮಿಸ್ಸಾಬೀಬ್ ಎಂದು ಕರೆಯುತ್ತಾರೆಂದು ಹೇಳಿದನು.</verse>
				<verse number="4">ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲು ಪಡುವಂತೆ ಮಾಡುತ್ತೇನೆ. ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು. ನಿನ್ನ ಕಣ್ಣುಗಳು ಅದನ್ನು ನೋಡುವುವು. ಯೆಹೂದ್ಯರನ್ನೆಲ್ಲಾ ನಾನು ಬಾಬಿಲೋನಿನ ಅರಸನ ಕೈಗೆ ಒಪ್ಪಿಸುವೆನು. ಅವನು ಅವರನ್ನು ಬಾಬಿಲೋನಿಗೆ ಒಯ್ದು ಖಡ್ಗದಿಂದ ಕೊಲ್ಲುವನು.</verse>
				<verse number="5">ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ, ಅದರ ಎಲ್ಲಾ ನಿಧಿನಿಕ್ಷೇಪಗಳನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ, ಯೆಹೂದದ ಅರಸರ ಎಲ್ಲಾ ಭಂಡಾರಗಳನ್ನೂ ಅವರ ಶತ್ರುಗಳ ಕೈಗೆ ಒಪ್ಪಿಸುವೆನು. ಅವರು ಅವುಗಳನ್ನು ಸುಲಿದುಕೊಂಡು, ತೆಗೆದುಕೊಂಡು ಬಾಬಿಲೋನಿಗೆ ಒಯ್ಯುವರು.</verse>
				<verse number="6">ಪಷ್ಹೂರನೇ, ನೀನೂ, ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ. ಬಾಬಿಲೋನಿಗೆ ಹೋಗಿ ಅಲ್ಲಿಯೇ ಸಾಯುವೆ. ಅಲ್ಲಿಯೇ ಸಮಾಧಿಯಾಗುವೆ. ನಿನಗೂ, ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವುದು.’ ”</verse>
				<verse number="7">ಓ ಯೆಹೋವ ದೇವರೇ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆನು. ನೀವು ನನಗಿಂತ ಬಲಿಷ್ಠನಾಗಿದ್ದು ಜಯಿಸಿದಿರಿ. ನಾನು ಪ್ರತಿದಿನ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ. ಪ್ರತಿಯೊಬ್ಬನು ನನ್ನನ್ನು ಹಾಸ್ಯಮಾಡುತ್ತಾನೆ.</verse>
				<verse number="8">ಏಕೆಂದರೆ, ನಾನು ಮಾತನಾಡುವವನಾದ್ದರಿಂದ ಬಲತ್ಕಾರವೂ, ಕೊಳ್ಳೆಯೂ ಎಂದು ಗಟ್ಟಿಯಾಗಿ ಕೂಗುತ್ತೇನೆ. ಆದ್ದರಿಂದ ಯೆಹೋವ ದೇವರ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ, ಗೇಲಿಗೂ ಗುರಿಮಾಡಿತು.</verse>
				<verse number="9">“ಆಗ ನಾನು ಆತನನ್ನು ಕುರಿತು ಏನೂ ಹೇಳುವುದಿಲ್ಲ. ಆತನ ಹೆಸರಿನಲ್ಲಿ ಇನ್ನು ಮಾತನಾಡುವುದೇ ಇಲ್ಲ,” ಎಂದು ಅಂದುಕೊಂಡೆನು. ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲಾಗಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು. ಬಿಗಿ ಹಿಡಿದು ದಣಿದೆನು. ನನ್ನಿಂದ ಆಗದೆ ಹೋಯಿತು.</verse>
				<verse number="10">ಏಕೆಂದರೆ ಅನೇಕರ ಚಾಡಿಯನ್ನು ಕೇಳಿದೆನು. “ಸುತ್ತಲೂ ಭಯವಿದೆ. ಅವನನ್ನು ಖಂಡಿಸಿರಿ! ಅವನನ್ನು ಖಂಡಿಸೋಣ!” ನನ್ನ ಆಪ್ತರೆಲ್ಲರೂ ನಾನು ಕುಂಟುವುದನ್ನು ನೋಡಿಕೊಳ್ಳುತ್ತಾ ಒಂದು ವೇಳೆ ಅವನು ಮೋಸಗೊಂಡಾನು. “ಆಗ ನಾವು ಅವನನ್ನು ಗೆದ್ದು, ಅವನಲ್ಲಿ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.”</verse>
				<verse number="11">ಆದರೆ ಯೆಹೋವ ದೇವರು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾರೆ. ಆದ್ದರಿಂದ ನನ್ನನ್ನು ಹಿಂಸಿಸುವವರು ಎಡವುವರು, ಗೆಲ್ಲುವುದಿಲ್ಲ. ಅನುಕೂಲವಾಗದೆ ಇದ್ದುದರಿಂದ ಅವರು ಬಹಳವಾಗಿ ನಾಚಿಕೆಪಡುವರು. ಅವರ ಅವಮಾನವು ಎಂದಿಗೂ ಮರೆಯದ ಅವಮಾನವಾಗಿರುವುದು.</verse>
				<verse number="12">ಓ ಸೇನಾಧೀಶ್ವರ ಯೆಹೋವ ದೇವರೇ, ನೀತಿವಂತರನ್ನು ಪರಿಶೋಧಿಸುವವರೇ, ಅಂತರಿಂದ್ರಿಯಗಳನ್ನೂ, ಹೃದಯವನ್ನೂ ನೋಡುವವರೇ, ನೀವು ಅವರಿಗೆ ಪ್ರತಿದಂಡನೆ ಮಾಡುವುದನ್ನು ನಾನು ನೋಡುವಂತೆ ಮಾಡಿ. ಏಕೆಂದರೆ, ನಿಮಗೆ ನನ್ನ ವ್ಯಾಜ್ಯವನ್ನು ತಿಳಿಯಮಾಡಿದ್ದೇನೆ.</verse>
				<verse number="13">ಯೆಹೋವ ದೇವರಿಗೆ ಹಾಡಿರಿ, ಯೆಹೋವ ದೇವರನ್ನು ಸ್ತುತಿಸಿರಿ. ಏಕೆಂದರೆ, ಅವರು ಬಡವನ ಪ್ರಾಣವನ್ನು ಕೇಡು ಮಾಡುವವರ ಕೈಯಿಂದ ತಪ್ಪಿಸಿದ್ದಾರೆ.</verse>
				<verse number="14">ನಾನು ಹುಟ್ಟಿದ ದಿವಸವು ಶಾಪಗ್ರಸ್ತವಾಗಲಿ. ನನ್ನ ತಾಯಿ ನನ್ನನ್ನು ಹೆತ್ತ ದಿವಸವು ಶುಭವೆನಿಸಿಕೊಳ್ಳದಿರಲಿ.</verse>
				<verse number="15">ನನ್ನ ತಂದೆಗೆ, “ನಿನಗೆ ಗಂಡು ಕೂಸು ಹುಟ್ಟಿದೆ,” ಎಂಬ ಸಮಾಚಾರವನ್ನು ಹೇಳಿ ಬಹಳ ಸಂತೋಷ ಉಂಟುಮಾಡಿದವನು ಶಾಪಗ್ರಸ್ತನಾಗಲಿ!</verse>
				<verse number="16">ಆ ಮನುಷ್ಯನು, ಯೆಹೋವ ದೇವರು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ. ಅವನು ಬೆಳಿಗ್ಗೆ ಕೂಗನ್ನೂ, ಮಧ್ಯಾಹ್ನದಲ್ಲಿ ಆರ್ಭಟವನ್ನೂ ಕೇಳಲಿ.</verse>
				<verse number="17">ನಾನು ಗರ್ಭ ಬಿಟ್ಟಾಗಲೇ ಅವರು ನನ್ನನ್ನು ಕೊಲ್ಲದೆ ಹೋದದ್ದರಿಂದ, ಇಲ್ಲವೆ ನನ್ನ ತಾಯಿ ನನಗೆ ಸಮಾಧಿಯಾಗಿದ್ದು, ಅವಳ ಗರ್ಭವು ನಿತ್ಯವಾಗಿ ಬಸುರಾಗಿಯೇ ಇದ್ದರೆ ಒಳ್ಳೆಯದಾಗಿತ್ತು.</verse>
				<verse number="18">ನಾನು ಕಷ್ಟವನ್ನೂ, ಚಿಂತೆಯನ್ನೂ ನೋಡುವುದಕ್ಕೂ, ನನ್ನ ದಿವಸಗಳು ನಾಚಿಕೆಯಲ್ಲಿ ಕಳೆದುಹೋಗುವುದಕ್ಕೂ ಗರ್ಭದಿಂದ ಹೊರಗೆ ಬಂದದ್ದು ಏಕೆ?</verse>
			</chapter>
			<chapter number="21">
				<verse number="1">ಅರಸನಾದ ಚಿದ್ಕೀಯನು ಮಲ್ಕೀಯನ ಮಗ ಪಷ್ಹೂರನನ್ನೂ, ಮಾಸೇಯನ ಮಗನಾದ ಯಾಜಕನಾದ ಚೆಫನ್ಯನನ್ನೂ ಯೆರೆಮೀಯನ ಬಳಿಗೆ ಕಳುಹಿಸಿ,</verse>
				<verse number="2">“ನಮಗೋಸ್ಕರ ಯೆಹೋವ ದೇವರನ್ನು ವಿಚಾರಿಸು. ಏಕೆಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ. ಒಂದು ವೇಳೆ ಅವನು ನಮ್ಮನ್ನು ಬಿಟ್ಟು ಹೊರಟು ಹೋಗುವಹಾಗೆ ಯೆಹೋವ ದೇವರು ಹಿಂದಿನ ಕಾಲದಂತೆಯೇ ತಮ್ಮ ಎಲ್ಲಾ ಅದ್ಭುತಗಳ ಪ್ರಕಾರ ನಮಗೆ ಮಾಡುವರು,” ಎಂದು ಅವರ ಮೂಲಕ ವಿಜ್ಞಾಪಿಸಿದಾಗ, ಯೆರೆಮೀಯನಿಗೆ ಯೆಹೋವ ದೇವರ ವಾಕ್ಯವು ಬಂತು.</verse>
				<verse number="3">ಆಗ ಯೆರೆಮೀಯನು ಅವರಿಗೆ ಹೇಳಿದ್ದೇನೆಂದರೆ, “ಚಿದ್ಕೀಯನಿಗೆ ಹೀಗೆ ಹೇಳಿರಿ:</verse>
				<verse number="4">‘ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬಿಲೋನಿನ ಅರಸನಿಗೂ, ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವುದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನೂ, ನಾನು ಹಿಂದಕ್ಕೆ ತಳ್ಳಿ, ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿಬರುವಂತೆ ಮಾಡುವೆನು.</verse>
				<verse number="5">ನಾನೇ ಚಾಚಿದ ಕೈಯಿಂದಲೂ, ಬಲವಾದ ತೋಳಿನಿಂದಲೂ, ಕೋಪದಿಂದಲೂ, ಉಗ್ರದಿಂದಲೂ, ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು.</verse>
				<verse number="6">ಈ ಪಟ್ಟಣದ ನಿವಾಸಿಗಳನ್ನೂ, ಮನುಷ್ಯರನ್ನೂ, ಮೃಗಗಳನ್ನೂ ಸಹಿತವಾಗಿ ಹೊಡೆಯುವೆನು. ಅವರು ದೊಡ್ಡ ವ್ಯಾಧಿಯಿಂದ ಸಾಯುವರು.</verse>
				<verse number="7">ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’</verse>
				<verse number="8">“ಈ ಜನಕ್ಕೆ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಜೀವದ ಮಾರ್ಗವನ್ನೂ, ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ.</verse>
				<verse number="9">ಈ ಪಟ್ಟಣದಲ್ಲಿ ನಿಲ್ಲುವವನು ಖಡ್ಗದಿಂದಲೂ, ಕ್ಷಾಮದಿಂದಲೂ, ವ್ಯಾಧಿಯಿಂದಲೂ ಸಾಯುವನು. ಆದರೆ ಹೊರಗೆ ಹೋಗಿ, ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ ಕಡೆಗೆ ಸೇರುವವನು ಬದುಕುವನು. ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು.</verse>
				<verse number="10">ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವುದು. ಏಕೆಂದರೆ ನಾನು ಒಳ್ಳೆಯದಕ್ಕಲ್ಲ, ಕೆಟ್ಟದ್ದಕ್ಕೆ ಈ ಪಟ್ಟಣಕ್ಕೆ ವಿರೋಧವಾಗಿ ನನ್ನ ಮುಖವನ್ನಿಟ್ಟಿದ್ದೇನೆಂದು ಯೆಹೋವ ದೇವರು ಅನ್ನುತ್ತಾರೆ. ಅದು ಬಾಬಿಲೋನಿನ ಅರಸನ ಕೈಯಲ್ಲಿ ಒಪ್ಪಿಸಲಾಗುವುದು. ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.’</verse>
				<verse number="11">“ಯೆಹೂದದ ಅರಸನ ಮನೆಯವರಿಗೆ ಹೀಗೆ ಹೇಳು: ‘ಯೆಹೋವ ದೇವರ ವಾಕ್ಯವನ್ನು ಕೇಳಿರಿ,</verse>
				<verse number="12">ದಾವೀದನ ಮನೆಯವರೇ, ಯೆಹೋವ ದೇವರು ಹೇಳುವುದೇನೆಂದರೆ, “ ‘ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು, ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾಗದ ಹಾಗೆ ಉರಿಯುವುದು.</verse>
				<verse number="13">ಇಗೋ, ತಗ್ಗಿನ ನಗರಿಯೇ, ಬಯಲಿನ ಬಂಡೆಯಲ್ಲಿ ವಾಸಮಾಡುವವರೇ, “ನಮ್ಮ ಮೇಲೆ ಯಾರು ಇಳಿದು ಬರುವರೆಂದು ನಮ್ಮ ನಿವಾಸಗಳಲ್ಲಿ ಯಾರು ಸೇರುವರೆಂದು, ಅನ್ನುವವರೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="14">ನಿಮ್ಮ ಕ್ರಿಯೆಗಳ ಫಲದ ಪ್ರಕಾರ ನಿಮ್ಮನ್ನು ಶಿಕ್ಷಿಸುತ್ತೇನೆ, ಎಂದು ಯೆಹೋವ ದೇವರು ಹೇಳುತ್ತಾರೆ. ಅದರ ಅಡವಿಗೆ ಬೆಂಕಿ ಹಚ್ಚುತ್ತೇನೆ. ಅದರ ಸುತ್ತಲಿಗಿರುವುದನ್ನೆಲ್ಲಾ ಅದು ನುಂಗಿಬಿಡುವುದು.’ ”</verse>
			</chapter>
			<chapter number="22">
				<verse number="1">ಯೆಹೋವ ದೇವರು ಹೀಗೆ ಹೇಳುತ್ತಾನೆ: “ಯೆಹೂದದ ಅರಸನ ಮನೆಗೆ ಇಳಿದು ಹೋಗಿ, ಅಲ್ಲಿ ಈ ವಾಕ್ಯವನ್ನು ಹೇಳು:</verse>
				<verse number="2">‘ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ಯೆಹೂದದ ಅರಸನೇ, ನೀನೂ, ನಿನ್ನ ಸೇವಕರೂ ಈ ಬಾಗಿಲುಗಳಿಂದ ಪ್ರವೇಶಿಸುವ ನಿನ್ನ ಜನರೂ ಸಹಿತವಾಗಿ ಯೆಹೋವ ದೇವರ ವಾಕ್ಯವನ್ನು ಕೇಳಿರಿ.</verse>
				<verse number="3">ಯೆಹೋವ ದೇವರು ಹೇಳುವುದೇನೆಂದರೆ: ನ್ಯಾಯವನ್ನೂ, ನೀತಿಯನ್ನೂ ನಡೆಸಿರಿ. ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ. ಪರದೇಶಸ್ಥನಿಗೆ, ದಿಕ್ಕಿಲ್ಲದವನಿಗೆ ಮತ್ತು ವಿಧವೆಗೆ ಉಪದ್ರವವನ್ನಾದರೂ, ಬಲಾತ್ಕಾರವನ್ನಾದರೂ ಮಾಡಬೇಡಿರಿ. ಈ ಸ್ಥಳದಲ್ಲಿ ನಿರಪರಾಧದ ರಕ್ತವನ್ನು ಚೆಲ್ಲಬೇಡಿರಿ.</verse>
				<verse number="4">ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ, ಆಗ ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವರೂ, ರಥಗಳಲ್ಲಿಯೂ, ಕುದುರೆಗಳ ಮೇಲೆಯೂ ಸವಾರಿ ಮಾಡುವ ಅರಸರು ತಮ್ಮ ಸೇವಕರ ಮತ್ತು ತಮ್ಮ ಜನರಸಹಿತವಾಗಿ ಈ ಅರಮನೆಯ ಬಾಗಿಲುಗಳಿಂದ ಪ್ರವೇಶಿಸಿದರು.</verse>
				<verse number="5">ಆದರೆ ನೀವು ಈ ವಾಕ್ಯಗಳನ್ನು ಕೇಳದೆ ಹೋದರೆ, ಈ ಅರಮನೆ ಹಾಳಾಗುವುದು ಎಂದು ನನ್ನ ಮೇಲೆ ಆಣೆ ಇಡುತ್ತೇನೆಂದು ಯೆಹೋವ ದೇವರು ಹೇಳುತ್ತಾರೆ.’ ”</verse>
				<verse number="6">ಯೆಹೋವ ದೇವರು ಯೆಹೂದದ ಅರಸನ ಅರಮನೆಗೆ ಹೀಗೆ ಹೇಳುತ್ತಾರೆ: “ನೀನು ನನಗೆ ಗಿಲ್ಯಾದೂ, ಲೆಬನೋನಿನ ಗಿರಿಶೃಂಗ ಆಗಿದ್ದೀ. ಆದರೂ ನಿಶ್ಚಯವಾಗಿ ನಿನ್ನನ್ನು ಮರುಭೂಮಿಯಾಗಿಯೂ, ನಿವಾಸಿಗಳಿಲ್ಲದ ಪಟ್ಟಣಗಳನ್ನಾಗಿಯೂ ಮಾಡುವೆನು.</verse>
				<verse number="7">ನಿನಗೆ ವಿರೋಧವಾಗಿ ತಮ್ಮ ತಮ್ಮ ಆಯುಧಗಳಿಂದ ನಾಶಮಾಡುವವರನ್ನು ಸಿದ್ಧಮಾಡುತ್ತೇನೆ. ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.</verse>
				<verse number="8">“ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು. ‘ಯೆಹೋವ ದೇವರು ಈ ದೊಡ್ಡ ಪಟ್ಟಣಕ್ಕೆ ಏಕೆ ಈ ಪ್ರಕಾರ ಮಾಡಿದ್ದಾರೆ?’ ಎಂದು ಒಬ್ಬರಿಗೊಬ್ಬರು ಹೇಳಿಕೊಳ್ಳುವರು.</verse>
				<verse number="9">‘ಆಗ ಅವರು ತಮ್ಮ ದೇವರಾದ ಯೆಹೋವ ದೇವರ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮಸ್ಕರಿಸಿ ಸೇವಿಸಿದ್ದರಿಂದಲೇ,’ ಎಂದು ಅವರು ಉತ್ತರಕೊಡುವರು.”</verse>
				<verse number="10">ಮರಣ ಹೊಂದಿದ ಅರಸನಿಗಾಗಿ ಅಳಬೇಡಿರಿ. ಅವನಿಗಾಗಿ ಗೋಳಾಡಬೇಡಿರಿ. ಹೊರಟು ಹೋದವನಿಗಾಗಿ ಬಹಳವಾಗಿ ಅಳಿರಿ. ಏಕೆಂದರೆ ಅವನು ತಿರುಗಿ ಬರುವುದೇ ಇಲ್ಲ. ತಾನು ಹುಟ್ಟಿದ ದೇಶವನ್ನು ಇನ್ನು ನೋಡುವುದೇ ಇಲ್ಲ.</verse>
				<verse number="11">ಯೆಹೂದದ ಅರಸನಾದ ಯೋಷೀಯನ ಮಗನು ತನ್ನ ತಂದೆಯಾದ ಯೋಷೀಯನಿಗೆ ಬದಲಾಗಿ ಆಳಿದವನೂ, ಈ ಸ್ಥಳದಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬರುವುದೇ ಇಲ್ಲ.</verse>
				<verse number="12">ಅವರು ಅವನನ್ನು ಸೆರೆಯಾಗಿ ಒಯ್ದ ಸ್ಥಳದಲ್ಲಿಯೇ ಸಾಯುವನು. ಅವನು ಈ ದೇಶವನ್ನು ಇನ್ನು ನೋಡುವುದಿಲ್ಲ.”</verse>
				<verse number="13">“ಅನೀತಿಯಿಂದ ತನ್ನ ಅರಮನೆಯನ್ನು ಅನ್ಯಾಯದಿಂದ ತನ್ನ ಕೊಠಡಿಗಳನ್ನು ಕಟ್ಟಿಸಿಕೊಳ್ಳುವವನಿಗೂ, ಕೂಲಿಕೊಡದೆ ತನ್ನ ನೆರೆಯವನ ಕೈಯಿಂದ ಸುಮ್ಮನೆ ಕೆಲಸ ತೆಗೆದುಕೊಳ್ಳುವವನೂ ಕಷ್ಟ!</verse>
				<verse number="14">ಅವನು, ‘ನಾನು ವಿಸ್ತಾರವಾದ ಅರಮನೆಯನ್ನೂ, ವಿಶಾಲವಾದ ಕೊಠಡಿಗಳನ್ನೂ ಕಟ್ಟಿಸಿಕೊಳ್ಳುವೆನೆಂದು ಹೇಳಿ.’ ಕಿಟಕಿಗಳನ್ನು ಕೊರೆದು, ದೇವದಾರಿನ ಹಲಗೆಗಳನ್ನು ಹಾಕಿ, ಕೆಂಪು ಬಣ್ಣವನ್ನು ಹಚ್ಚುವವನಿಗೂ ಕಷ್ಟ!</verse>
				<verse number="15">“ಹೆಚ್ಚು ಹೆಚ್ಚು ದೇವದಾರುಗಳನ್ನು ಹೊಂದಲು ಅದು ನಿಮ್ಮನ್ನು ರಾಜನನ್ನಾಗಿಸುತ್ತದೆಯೇ? ನಿನ್ನ ತಂದೆ ಉಂಡು, ಕುಡಿದು ನ್ಯಾಯವನ್ನೂ, ನೀತಿಯನ್ನೂ ಮಾಡಲಿಲ್ಲವೋ? ಆಗ ಅವನಿಗೆ ಒಳ್ಳೆಯದಾಗಲಿಲ್ಲವೋ?</verse>
				<verse number="16">ಬಡವನ ಮತ್ತು ದರಿದ್ರನ ನ್ಯಾಯವನ್ನು ತೀರಿಸಿದನು. ಆಗ ಅವನಿಗೆ ಒಳ್ಳೆಯದಾಯಿತು. ನನ್ನನ್ನು ತಿಳಿದುಕೊಳ್ಳುವುದು ಇದೇ ಅಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="17">“ಆದರೆ ನಿನ್ನ ಕಣ್ಣುಗಳು, ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ ಅಪರಾಧವಿಲ್ಲದವನ ರಕ್ತ ಚೆಲ್ಲುವುದರ ಮೇಲೆ ಮತ್ತು ಪೀಡೆಯನ್ನೂ, ಬಲಾತ್ಕಾರವನ್ನೂ ಮಾಡುವುದರ ಮೇಲೆಯೇ ಹೊರತು, ಮತ್ಯಾವುದರ ಮೇಲೆಯೂ ಇರುವುದಿಲ್ಲ.”</verse>
				<verse number="18">ಆದ್ದರಿಂದ ಯೋಷೀಯನ ಮಗ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅವರು ಅವನನ್ನು ಕುರಿತು ಗೋಳಾಡಿ, ‘ಅಯ್ಯೋ, ನನ್ನ ಸಹೋದರನೇ, ಅಯ್ಯೋ, ನನ್ನ ಸಹೋದರಿಯೇ,’ ಎಂದು ಅನ್ನುವುದಿಲ್ಲ. ‘ಅಯ್ಯೋ, ದೊರೆಯೇ, ಅಯ್ಯೋ, ಅವನ ವೈಭವವೇ,’ ಎಂದು ಅವನನ್ನು ಕುರಿತು ಗೋಳಾಡುವುದಿಲ್ಲ.</verse>
				<verse number="19">ಕತ್ತೆಯನ್ನು ಹೂಳಿಡುವ ಪ್ರಕಾರ ಅವನನ್ನು ಹೂಳಿಡುವರು. ಅವನನ್ನು ಎಳೆದುಕೊಂಡು ಹೋಗಿ, ಯೆರೂಸಲೇಮಿನ ಬಾಗಿಲುಗಳ ಆಚೆಗೆ ಬಿಸಾಡುವರು.”</verse>
				<verse number="20">“ಲೆಬನೋನಿಗೆ ಹೋಗಿ ಕೂಗು, ಬಾಷಾನಿನಲ್ಲಿ ನಿನ್ನ ಸ್ವರವನ್ನೆತ್ತು, ಅಬಾರೀಮಿನಲ್ಲಿ ಮೊರೆಯಿಡು; ಏಕೆಂದರೆ ನಿನ್ನ ಜೊತೆಗಾರರು ನಾಶವಾಗಿದ್ದಾರೆ.</verse>
				<verse number="21">ನಿನ್ನ ಏಳಿಗೆಗೆ ನಿನ್ನ ಸಂಗಡ ಮಾತನಾಡಿದೆನು. ಆದರೆ ನೀನು, ‘ನಾನು ಕೇಳುವುದಿಲ್ಲ,’ ಎಂದೆ. ನನ್ನ ಮಾತಿಗೆ ಕಿವಿಗೊಡದೆ ಇರುವುದೇ ನಿನ್ನ ಯೌವನದ ರೀತಿಯಾಗಿದೆ.</verse>
				<verse number="22">ನಿನ್ನ ಕುರುಬರನ್ನೆಲ್ಲಾ ಗಾಳಿ ಅಟ್ಟಿಸಿಕೊಂಡು ಹೋಗುವುದು. ನಿನ್ನ ಜೊತೆಗಾರರು ಸೆರೆಗೆ ಹೋಗುವರು. ನಿಶ್ಚಯವಾಗಿ ಆಗ ನಿನ್ನ ಎಲ್ಲಾ ಕೆಟ್ಟತನದ ನಿಮಿತ್ತ ನಿನಗೆ ನಾಚಿಕೆಯೂ, ಅವಮಾನವೂ ಆಗುವುದು.</verse>
				<verse number="23">ಓ, ‘ಲೆಬನೋನಿನಲ್ಲಿ’ ವಾಸಮಾಡುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡವಳೇ, ನಿನ್ನ ಮೇಲೆ ಬೇನೆಗಳೂ, ಹೆರುವವಳಂತಿರುವ ವೇದನೆಯೂ ಬರುವಾಗ ಎಷ್ಟೋ ದುಃಖಕರವಾಗಿರುವೆ.</verse>
				<verse number="24">“ನನ್ನ ಜೀವದಾಣೆ, ಯೆಹೋಯಾಕೀಮನ ಮಗ ಯೆಹೂದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಉಂಗುರವಾಗಿದ್ದರೂ, ನಿನ್ನನ್ನು ಅಲ್ಲಿಂದ ಕಿತ್ತುಹಾಕಿ,</verse>
				<verse number="25">ನಿನ್ನ ಪ್ರಾಣವನ್ನು ಹುಡುಕುವವರ ಕೈಗೂ, ನೀನು ಹೆದರಿಕೊಂಡವರ ಕೈಗೂ ಅಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಹಾಗೂ ಬಾಬಿಲೋನಿಯ ಕೈಗೆ ಒಪ್ಪಿಸಿ ಬಿಡುತ್ತೇನೆ.</verse>
				<verse number="26">ನಿನ್ನನ್ನೂ, ನಿನ್ನ ಹೆತ್ತ ತಾಯಿಯನ್ನೂ ನೀವು ಹುಟ್ಟದಿರುವ ಬೇರೆ ದೇಶದಲ್ಲಿ ಹಾಕಿಬಿಡುವೆನು. ನೀವು ಅಲ್ಲೇ ಸಾಯುವಿರಿ.</verse>
				<verse number="27">ಆದರೆ ಅವರು ತಿರುಗಿ ಬರುವುದಕ್ಕೆ ಮನಸ್ಸು ಮಾಡುವ ದೇಶಕ್ಕೆ ಹಿಂದಿರುಗಲಾರರು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="28">ಕೊನ್ಯನೆಂಬ ಈ ಮನುಷ್ಯನು ಹೀನವಾಗಿ ಒಡೆದುಹೋದ ಮಡಿಕೆಯೆ? ಮೆಚ್ಚುಗೆ ಇಲ್ಲದ ಪಾತ್ರೆಯೆ? ಏಕೆ ಕೊನ್ಯನೂ, ಅವನ ಸಂತಾನವೂ ಬೀದಿಪಾಲಾಗಿದ್ದಾರೆ, ತಮಗೆ ತಿಳಿಯದ ದೇಶಕ್ಕೆ ಗಡಿಪಾರಾಗಿದ್ದಾರೆ?</verse>
				<verse number="29">ಓ ದೇಶವೇ, ದೇಶವೇ, ದೇಶವೇ, ಯೆಹೋವ ದೇವರ ವಾಕ್ಯವನ್ನು ಕೇಳು.</verse>
				<verse number="30">ಯೆಹೋವ ದೇವರು ಹೀಗೆ ಹೇಳುತ್ತಾರೆ: “ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ, ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆಯಿರಿ. ಏಕೆಂದರೆ ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕುಳಿತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವುದಿಲ್ಲ.”</verse>
			</chapter>
			<chapter number="23">
				<verse number="1">“ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಕಷ್ಟ!” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="2">ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ತನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧವಾಗಿ ಹೀಗೆ ಹೇಳುತ್ತಾರೆ: “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ಮತ್ತು ಅವುಗಳ ಮೇಲೆ ಕಾಳಜಿ ತೋರಿಸಲಿಲ್ಲ. ಇಗೋ, ನೀನು ಮಾಡಿದ ಕೆಟ್ಟತನಕ್ಕಾಗಿ ನಾನು ನಿನಗೆ ಶಿಕ್ಷೆಯನ್ನು ಕೊಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="3">“ಆದರೆ ನಾನು ನನ್ನ ಮಂದೆಯ ಶೇಷವನ್ನು, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ, ಅವರನ್ನು ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು. ಅವರು ಪೀಳಿಗೆಯಾಗಿ ಹೆಚ್ಚುವರು.</verse>
				<verse number="4">ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ. ಅವರು ಇನ್ನು ಮೇಲೆ ಭಯಪಡುವುದೇ ಇಲ್ಲ, ಅಂಜುವುದಿಲ್ಲ, ಕೊರತೆ ಪಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="5">“ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಎಬ್ಬಿಸುತ್ತೇನೆ. ಒಬ್ಬ ಅರಸನು ರಾಜ್ಯವನ್ನಾಳಿ ವೃದ್ಧಿಯಾಗುವನು. ಭೂಮಿಯಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.</verse>
				<verse number="6">ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.</verse>
				<verse number="7">“ಆದ್ದರಿಂದ ಇಗೋ, ದಿನಗಳು ಬರಲಿವೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ, ‘ಇಸ್ರಾಯೇಲನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವುದೇ ಇಲ್ಲ.</verse>
				<verse number="8">ಆದರೆ, ‘ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ಬರಮಾಡಿದ ಯೆಹೋವ ದೇವರ ಜೀವದಾಣೆ,’ ಎಂದು ಹೇಳುವರು. ಅವರು ತಮ್ಮ ದೇಶದಲ್ಲಿಯೇ ವಾಸಮಾಡುವರು.”</verse>
				<verse number="9">ಪ್ರವಾದಿಗಳ ನಿಮಿತ್ತ: ನನ್ನ ಹೃದಯವು ನನ್ನಲ್ಲಿ ಮುರಿದಿದೆ. ನನ್ನ ಎಲುಬುಗಳೆಲ್ಲಾ ಕದಲುತ್ತವೆ. ಯೆಹೋವ ದೇವರ ನಿಮಿತ್ತವೂ, ಆತನ ಪರಿಶುದ್ಧ ವಾಕ್ಯಗಳ ನಿಮಿತ್ತವೂ, ಮತ್ತನಾದ ಮನುಷ್ಯನ ಹಾಗೆಯೂ, ದ್ರಾಕ್ಷಾರಸಕ್ಕೆ ಒಳಗಾದ ಪುರುಷನ ಹಾಗೆಯೂ ಇದ್ದೇನೆ.</verse>
				<verse number="10">ಏಕೆಂದರೆ ದೇಶವು ವ್ಯಭಿಚಾರಗಳಿಂದ ತುಂಬಿದೆ. ದೇಶವು ಶಾಪದಿಂದ ದುಃಖಿಸುತ್ತದೆ. ಮರುಭೂಮಿಯ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ. ಪ್ರವಾದಿಗಳು ಕೆಟ್ಟ ಮಾರ್ಗವನ್ನು ಅನುಸರಿಸುತ್ತಾರೆ ಮತ್ತು ತಮ್ಮ ಶಕ್ತಿಯನ್ನು ಅನ್ಯಾಯವಾಗಿ ಬಳಸುತ್ತಾರೆ.</verse>
				<verse number="11">“ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ. ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="12">“ಆದ್ದರಿಂದ ಅವರ ಮಾರ್ಗವು ಕತ್ತಲೆಯಲ್ಲಿರುವ ಜಾರುವ ಸ್ಥಳಗಳ ಹಾಗಿರುವುದು. ಅವರು ಮುಗ್ಗರಿಸಿಬೀಳುವರು. ನಾನು ಕೇಡನ್ನು ದಂಡನೆಯ ವರ್ಷವನ್ನಾಗಿ ಅವರ ಮೇಲೆ ಬರಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="13">“ಸಮಾರ್ಯದ ಪ್ರವಾದಿಗಳಲ್ಲಿ ಅಸಹ್ಯಕರ ವಿಷಯವನ್ನು ನೋಡಿದ್ದೇನೆ. ಅವರು ಬಾಳನಿಂದ ಪ್ರವಾದನೆಯನ್ನು ಕೇಳಿ, ನನ್ನ ಜನರಾದ ಇಸ್ರಾಯೇಲನ್ನು ತಪ್ಪುವಂತೆ ಮಾಡಿದ್ದಾರೆ.</verse>
				<verse number="14">ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ. ಅವರು ವ್ಯಭಿಚಾರ ಮಾಡಿ, ಸುಳ್ಳಿನಲ್ಲಿ ನಡೆದುಕೊಂಡದ್ದಲ್ಲದೆ, ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ. ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ, ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.”</verse>
				<verse number="15">ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಪ್ರವಾದಿಗಳ ವಿಷಯವಾಗಿ ಹೇಳುವುದೇನೆಂದರೆ: “ನಾನು ಅವರಿಗೆ ಕಹಿಯಾದ ಆಹಾರ ತಿನ್ನುವುದಕ್ಕೆ ಕೊಡುವೆನು. ವಿಷದ ನೀರನ್ನು ಕುಡಿಯ ಕೊಡುವೆನು. ಏಕೆಂದರೆ ಯೆರೂಸಲೇಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.”</verse>
				<verse number="16">ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿಗೊಡಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ. ಯೆಹೋವ ದೇವರ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನವನ್ನು ಹೇಳುತ್ತಾರೆ.</verse>
				<verse number="17">ಆದರೂ ನನ್ನನ್ನು ಅಸಹ್ಯಿಸುವವರಿಗೆ, ಅವರು, ‘ನಿಮಗೆ ಸಮಾಧಾನವಾಗುವುದು, ಎಂದು ಯೆಹೋವ ದೇವರು ಹೇಳಿದ್ದಾರೆ,’ ಎಂದು ಹೇಳುತ್ತಲೇ ಇದ್ದಾರೆ. ತಮ್ಮ ಹೃದಯದ ಹಟದ ಪ್ರಕಾರ ನಡೆದುಕೊಳ್ಳುವವರೆಲ್ಲರಿಗೆ ‘ನಿಮ್ಮ ಮೇಲೆ ಕೇಡು ಬರುವುದಿಲ್ಲ,’ ಎನ್ನುತ್ತಾರೆ.</verse>
				<verse number="18">ಆದರೆ ಯಾರು ಯೆಹೋವ ದೇವರ ಆಲೋಚನೆಯ ಸಭೆಯಲ್ಲಿ ನಿಂತು ಆತನ ವಾಕ್ಯವನ್ನು ತಿಳಿದುಕೊಂಡು ಕೇಳಿದ್ದಾರೆ? ಯಾರು ಆತನ ವಾಕ್ಯವನ್ನು ಲಕ್ಷ್ಯವಿಟ್ಟು ಕೇಳಿದ್ದಾರೆ?</verse>
				<verse number="19">ಇಗೋ, ಯೆಹೋವ ದೇವರ ಬಿರುಗಾಳಿಯು ಉಗ್ರವಾಗಿ ಹೊರಟಿದೆ. ಅಘೋರವಾದ ಆ ಬಿರುಗಾಳಿಯು ದುಷ್ಟರ ತಲೆಯ ಮೇಲೆ ಕಠಿಣವಾಗಿ ಬೀಳುವುದು</verse>
				<verse number="20">ಆತನು ತನ್ನ ಹೃದಯದ ಆಲೋಚನೆಗಳನ್ನು ನಡೆಸಿ ತೀರಿಸುವವರೆಗೂ ಯೆಹೋವ ದೇವರ ಕೋಪವು ತಿರುಗುವುದಿಲ್ಲ. ಅಂತ್ಯ ದಿವಸಗಳಲ್ಲಿ ನೀವು ಅದನ್ನು ಸಂಪೂರ್ಣವಾಗಿ ಗ್ರಹಿಸುವಿರಿ.</verse>
				<verse number="21">ನಾನು ಈ ಪ್ರವಾದಿಗಳನ್ನು ಕಳುಹಿಸಲಿಲ್ಲ; ಆದರೂ ಅವರು ತಮ್ಮ ಸಂದೇಶದೊಂದಿಗೆ ಓಡಿದ್ದಾರೆ ನಾನು ಅವರ ಸಂಗಡ ಮಾತನಾಡಲಿಲ್ಲ. ಆದರೂ ಪ್ರವಾದಿಸಿದರು.</verse>
				<verse number="22">ಆದರೆ ಅವರು ನನ್ನ ಆಲೋಚನಾ ಸಭೆಯಲ್ಲಿ ನಿಂತಿದ್ದರೆ, ಆಗ ಅವರು ಜನರಿಗೆ ನನ್ನ ವಾಕ್ಯಗಳನ್ನು ಹೇಳಿಕೊಟ್ಟು, ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ, ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.”</verse>
				<verse number="23">ಯೆಹೋವ ದೇವರು ಹೀಗೆನ್ನುತ್ತಾರೆ, “ಹತ್ತಿರದಲ್ಲಿ ಇದ್ದರೆ ಮಾತ್ರ ನಾನು ದೇವರೋ? ದೂರದಲ್ಲಿದ್ದರೆ ನಾನು ದೇವರಲ್ಲವೋ?”</verse>
				<verse number="24">ನನ್ನ ಕಣ್ಣಿಗೆ ಬೀಳದಂತೆ ಯಾವನಾದರೂ ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="25">“ ‘ನನಗೆ ಕನಸು ಬಿತ್ತು, ಕನಸು ಬಿತ್ತು,’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.</verse>
				<verse number="26">ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರವರೆಗೆ ಇರುವುದು? ಹೌದು, ಅವರು ತಮ್ಮ ಮನಸ್ಸಿನ ಭ್ರಮೆಗಳನ್ನು ಪ್ರವಾದಿಸುವವರೇ.</verse>
				<verse number="27">ಅವರ ಪಿತೃಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ, ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತುಬಿಡುವಂತೆ ಮಾಡುವುದಕ್ಕೆ ಯೋಚಿಸುತ್ತಾರೆ.</verse>
				<verse number="28">ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ. ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ?” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="29">“ನನ್ನ ವಾಕ್ಯ ಬೆಂಕಿಗೆ ಸಮಾನ, ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ.” ಇದು ಯೆಹೋವ ದೇವರಾದ ನನ್ನ ನುಡಿ.</verse>
				<verse number="30">ಆದ್ದರಿಂದ ಇಗೋ, “ತನ್ನ ನೆರೆಯವನಿಂದ ನನ್ನ ವಾಕ್ಯಗಳನ್ನು ಕದ್ದುಕೊಳ್ಳುವ ಪ್ರತಿಯೊಬ್ಬ ಪ್ರವಾದಿಗೆ ನಾನು ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="31">“ಇಗೋ, ತಮ್ಮ ನಾಲಿಗೆಗಳನ್ನು ಆಡಿಸುತ್ತಾ, ‘ಯೆಹೋವ ದೇವರು ನುಡಿಯುತ್ತಾರೆ,’ ಎಂದು ಅನ್ನುವ ಪ್ರವಾದಿಗಳಿಗೆ ನಾನು ವಿರೋಧವಾಗಿದ್ದೇನೆ.</verse>
				<verse number="32">ಸುಳ್ಳಿನ ಕನಸುಗಳನ್ನು ಪ್ರವಾದಿಸಿ, ತಮ್ಮ ಸುಳ್ಳುಗಳಿಂದಲೂ ತಮ್ಮ ನಿರರ್ಥಕವಾದ ವಿಚಾರಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆ ಕೊಡಲಿಲ್ಲ. ಆದ್ದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವುದೇ ಇಲ್ಲ,” ಎಂದು ಯೆಹೋವ ದೇವರು ನುಡಿಯುತ್ತಾರೆ.</verse>
				<verse number="33">“ಪ್ರವಾದಿಯಾಗಲಿ, ಯಾಜಕನಾಗಲಿ, ಈ ಜನರಲ್ಲಿ ಯಾರೇ ಆಗಲಿ, ‘ಯೆಹೋವ ದೇವರು ದಯಪಾಲಿಸಿರುವ ಹೊರೆ ಏನು?’ ಎಂದು ನಿನ್ನನ್ನು ಕೇಳಿದರೆ, ನೀನು ಅವರಿಗೆ ಹೀಗೆಂದು ಹೇಳು: ‘ನೀವೇ, ಯೆಹೋವ ದೇವರ ಹೊರೆ. ನಿಮ್ಮನ್ನು ಆತನು ಎಸೆದುಬಿಡುವನು.’</verse>
				<verse number="34">ಒಬ್ಬ ಪ್ರವಾದಿಯಾಗಲಿ, ಯಾಜಕನಾಗಲಿ ಅಥವಾ ಒಬ್ಬ ಜನಸಾಮಾನ್ಯನೇ ಆಗಲಿ, ‘ಯೆಹೋವ ದೇವರು ಹೊರೆ,’ ಎಂದು ಹೇಳಿದ್ದೇಯಾದರೆ, ನಾನು ಅವನನ್ನೂ, ಅವನ ಮನೆಯವರನ್ನೂ ದಂಡಿಸುವೆನು.</verse>
				<verse number="35">‘ಯೆಹೋವ ದೇವರು ಕೊಟ್ಟ ಉತ್ತರವೇನು? ಯೆಹೋವ ದೇವರು ನುಡಿದದ್ದು ಏನು?’ ಎಂದು ನಿಮ್ಮ ನಿಮ್ಮ ನೆರೆಹೊರೆಯವರನ್ನು ಮತ್ತು ಅಣ್ಣತಮ್ಮಂದಿರನ್ನು ವಿಚಾರಿಸಬೇಕೇ ಹೊರತು,</verse>
				<verse number="36">‘ಯೆಹೋವ ದೇವರ ಹೊರೆ,’ ಎಂಬ ಮಾತನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿ ಅವನವನಿಗೆ ಹೊರೆ. ಜೀವಸ್ವರೂಪನಾದ ದೇವರ ನುಡಿಗಳನ್ನು ಹೌದು, ನಮ್ಮ ದೇವರೂ ಸೇನಾಧೀಶ್ವರ ಯೆಹೋವ ದೇವರ ನುಡಿಗಳನ್ನು ನೀವು ತಲೆಕೆಳಗಾಗಿಸಿದ್ದೀರಿ.</verse>
				<verse number="37">‘ಯೆಹೋವ ದೇವರಿಂದ ನಿಮಗೆ ಯಾವ ಉತ್ತರ ದೊರಕಿತು? ಯೆಹೋವ ದೇವರು ಏನು ನುಡಿದಿದ್ದಾರೆ?’ ಎಂದು ಪ್ರವಾದಿಯನ್ನು ಕೇಳಿರಿ.</verse>
				<verse number="38">‘ಯೆಹೋವ ದೇವರ ಹೊರೆ,’ ಎಂದು ಹೇಳಬೇಡಿ. ಹೇಳಿದರೆ ಯೆಹೋವ ದೇವರು ಇಂತೆನ್ನುತ್ತಾನೆ: ‘ನಾನು ನಿಮಗೆ, ಯೆಹೋವ ದೇವರು ಹೊರೆ,’ ಎಂಬ ಮಾತನ್ನು ಎತ್ತಲೇಕೂಡದೆಂದು ಹೇಳಿ ಕಳುಹಿಸಿದರೂ, ನೀವು ಎತ್ತಿದ್ದೀರಿ.</verse>
				<verse number="39">ಈ ಕಾರಣ ನಿಮ್ಮನ್ನು ಮತ್ತು ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ನಗರವನ್ನು ನನ್ನೆದುರಿನಿಂದ ಎತ್ತಿ ಎಸೆದುಬಿಡುವೆನು.</verse>
				<verse number="40">ನೀವು ನಿಂದೆಗೆ ಗುರಿಯಾಗುವಿರಿ. ಎಂದಿಗೂ ಮರೆಯಲಾಗದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.”</verse>
			</chapter>
			<chapter number="24">
				<verse number="1">ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಯೆಹೂದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಬಡಗಿಯರನ್ನೂ, ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಗೆ ಒಯ್ದನು. ಯೆಹೋವ ದೇವರ ದೇವಾಲಯದ ಮುಂದೆ ಇಟ್ಟಿರುವ ಎರಡು ಬುಟ್ಟಿ ಅಂಜೂರದ ಹಣ್ಣುಗಳನ್ನು ಯೆಹೋವ ದೇವರು ನನಗೆ ತೋರಿಸಿದರು.</verse>
				<verse number="2">ಒಂದು ಬುಟ್ಟಿಯಲ್ಲಿ ಕಾಲಕ್ಕೆ ಮುಂಚೆ ಮಾಗಿದ ಹಣ್ಣುಗಳು ತುಂಬಿದ್ದವು. ಅವು ಅತ್ಯುತ್ತಮವಾದ ಅಂಜೂರದ ಹಣ್ಣುಗಳು. ಇನ್ನೊಂದು ಬುಟ್ಟಿಯಲ್ಲಿ ಯಾರೂ ತಿನ್ನಲಾಗದಷ್ಟು ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.</verse>
				<verse number="3">ಆಗ ಯೆಹೋವ ದೇವರು ನನ್ನನ್ನು, “ಯೆರೆಮೀಯನೇ, ನಿನಗೆ ಕಾಣುತ್ತಿರುವುದು ಏನು?” ಎಂದು ಕೇಳಿದರು. ನಾನು, “ಅಂಜೂರದ ಹಣ್ಣುಗಳನ್ನು ನೋಡುತ್ತಿದ್ದೇನೆ. ಒಳ್ಳೆಯ ಹಣ್ಣುಗಳು ಅತ್ಯುತ್ತಮವಾಗಿವೆ. ಕೆಟ್ಟ ಹಣ್ಣುಗಳು ಬಹಳ ಕೆಟ್ಟಿವೆ. ಯಾರೂ ತಿನ್ನಲಾಗದಷ್ಟು ಅಸಹ್ಯವಾಗಿವೆ,” ಎಂದು ಉತ್ತರಕೊಟ್ಟೆ.</verse>
				<verse number="4">ಆಗ ಯೆಹೋವ ದೇವರು ನನಗೆ ದಯಪಾಲಿಸಿದ ಸಂದೇಶ ಇದು:</verse>
				<verse number="5">“ಇಸ್ರಾಯೇಲರ ದೇವರಾದ ಯೆಹೋವ ದೇವರು ಹೇಳುವುದನ್ನು ಕೇಳು, ‘ನಾನು ಈ ಸ್ಥಳದಿಂದ ಬಾಬಿಲೋನಿಗೆ ಕಳುಹಿಸಿಬಿಟ್ಟು, ಅಲ್ಲಿ ಸೆರೆಯಾಳುಗಳಾಗಿರುವ ಯೆಹೂದ್ಯರು ಈ ಉತ್ತಮವಾದ ಅಂಜೂರದ ಹಣ್ಣುಗಳಂತವರು. ನಾನು ಅವರನ್ನು ಒಳ್ಳೆಯವರಂತೆ ಪರಿಗಣಿಸುತ್ತೇನೆ.</verse>
				<verse number="6">ಏಕೆಂದರೆ ನಾನು ಅವರ ಒಳ್ಳೆಯದರ ಮೇಲೆ ನನ್ನ ದೃಷ್ಟಿಯನ್ನು ಇಟ್ಟುಕೊಳ್ಳುತ್ತೇನೆ. ಈ ದೇಶಕ್ಕೆ ಅವರನ್ನು ತಿರುಗಿ ಬರಮಾಡುವೆನು. ಕೆಡವಿಹಾಕದೆ ಅವರನ್ನು ಕಟ್ಟುವೆನು. ಕೀಳದೆ ಅವರನ್ನು ನೆಡುವೆನು.</verse>
				<verse number="7">ನಾನೇ ಯೆಹೋವನೆಂದು ನನ್ನನ್ನು ತಿಳಿದುಕೊಳ್ಳುವುದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿರುವರು. ನಾನು ಅವರ ದೇವರಾಗಿರುವೆನು. ಏಕೆಂದರೆ ಅವರು ತಮ್ಮ ಪೂರ್ಣಹೃದಯದಿಂದ ನನ್ನ ಬಳಿಗೆ ಹಿಂದಿರುಗಿಕೊಳ್ಳುವರು.</verse>
				<verse number="8">“ ‘ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ, ಈಜಿಪ್ಟ್ ದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="9">‘ನಾನು ಅವರನ್ನು ಅಸಹ್ಯಪಡಿಸುತ್ತೇನೆ. ನಿಂದೆಗೂ, ಗಾದೆಗೂ, ಹಾಸ್ಯಕ್ಕೂ, ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.</verse>
				<verse number="10">ನಾನು ಅವರಿಗೂ, ಅವರ ತಂದೆಗಳಿಗೂ ಕೊಟ್ಟ ದೇಶದೊಳಗಿಂದ ಅವರು ನಾಶವಾಗುವವರೆಗೂ ಖಡ್ಗವನ್ನೂ, ಕ್ಷಾಮವನ್ನೂ, ವ್ಯಾಧಿಯನ್ನೂ ಅವರಲ್ಲಿ ಕಳುಹಿಸುವೆನು.’ ”</verse>
			</chapter>
			<chapter number="25">
				<verse number="1">ಯೋಷೀಯನ ಮಗನೂ, ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅಂದರೆ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಪ್ರವಾದಿ ಯೆರೆಮೀಯನಿಗೆ ಯೆಹೂದ್ಯರೆಲ್ಲರ ವಿಷಯವಾಗಿ ದೈವೋಕ್ತಿಯೊಂದು ಉಂಟಾಯಿತು.</verse>
				<verse number="2">ಪ್ರವಾದಿಯಾದ ಯೆರೆಮೀಯನು ಯೆಹೂದದ ಸಮಸ್ತ ಜನರಿಗೂ, ಯೆರೂಸಲೇಮಿನ ಎಲ್ಲಾ ನಿವಾಸಿಗಳಿಗೂ ತಿಳಿಸಿದ್ದು ಏನೆಂದರೆ:</verse>
				<verse number="3">ಆಮೋನನ ಮಗನೂ, ಯೆಹೂದದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರ್ಷದಿಂದ ಈ ದಿವಸದವರೆಗೆ ಅಂದರೆ, ಕಳೆದ ಇಪ್ಪತ್ತಮೂರು ವರ್ಷಗಳಿಂದ ಯೆಹೋವ ದೇವರು ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.</verse>
				<verse number="4">ಇದಲ್ಲದೆ ಯೆಹೋವ ದೇವರು ತಮ್ಮ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾರೆ. ಬೆಳಿಗ್ಗೆ ಎದ್ದು ಕಳುಹಿಸಿದ್ದಾರೆ. ಆದರೆ ನೀವು ಕೇಳಲಿಲ್ಲ. ಕೇಳುವುದಕ್ಕೆ ನಿಮ್ಮ ಕಿವಿ ಕೊಡಲಿಲ್ಲ.</verse>
				<verse number="5">ಅವರು ಹೇಳಿದ್ದೇನೆಂದರೆ: “ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನೂ, ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಯೆಹೋವ ದೇವರು ನಿಮಗೂ, ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ.</verse>
				<verse number="6">ಬೇರೆ ದೇವರುಗಳನ್ನು ಸೇವಿಸುವುದಕ್ಕೂ, ಆರಾಧಿಸುವುದಕ್ಕೂ ಹಿಂಬಾಲಿಸಬೇಡಿರಿ. ನಿಮ್ಮ ಕೈಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ. ಆಗ ನಿಮಗೆ ಯಾವ ಕೇಡೂ ಮಾಡೆನು.”</verse>
				<verse number="7">“ಆದರೂ ನೀವು ನನಗೆ ಕಿವಿಗೊಡದೆ, ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="8">ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀವು ನನ್ನ ಮಾತುಗಳನ್ನು ಕೇಳದ ಕಾರಣ</verse>
				<verse number="9">ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.</verse>
				<verse number="10">ನಾನು ಈ ದೇಶಗಳಿಂದ ಸಂತೋಷದ ಶಬ್ದ ಮತ್ತು ಸಂತೋಷದ ಶಬ್ದವನ್ನು ಮಾತ್ರ ತೆಗೆದುಹಾಕುತ್ತೇನೆ, ವಧು ಅಥವಾ ವಧುವಿನ ಧ್ವನಿ ಅಲ್ಲಿ ಕೇಳಿಸುವುದಿಲ್ಲ, ಬೀಸುಕಲ್ಲಿನ ಸದ್ದನ್ನು ಅಡಗಿಸುವೆನು. ದೀಪಕ್ಕೆ ಎಣ್ಣೆ ಇಲ್ಲದಂತೆ ಮಾಡುವೆನು.</verse>
				<verse number="11">ಈ ದೇಶವೆಲ್ಲಾ ಹಾಳಾಗಿ ಭಯಕ್ಕೆ ಗುರಿಯಾಗುವುದು. ಈ ಜನಾಂಗಗಳು ಬಾಬಿಲೋನಿನ ಅರಸನನ್ನು ಎಪ್ಪತ್ತು ವರ್ಷ ಸೇವಿಸುವರು.</verse>
				<verse number="12">“ಎಪ್ಪತ್ತು ವರ್ಷ ತುಂಬಿದ ಮೇಲೆ ನಾನು ಬಾಬಿಲೋನಿನ ಅರಸನನ್ನೂ, ಆ ಜನಾಂಗವನ್ನೂ, ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.</verse>
				<verse number="13">ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ, ಯೆರೆಮೀಯನು ಜನಾಂಗಗಳಿಗೆ ವಿರೋಧವಾಗಿ ಪ್ರವಾದಿಸಿ, ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡುವೆನು.</verse>
				<verse number="14">ಅನೇಕ ಜನಾಂಗಗಳೂ, ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆಗಳ ಪ್ರಕಾರವೂ, ಅವರ ಕೈಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="15">ಇಸ್ರಾಯೇಲಿನ ದೇವರಾದ ಯೆಹೋವ ದೇವರು ನನಗೆ ಹೀಗೆಂದರು: “ಈ ರೌದ್ರದ ದ್ರಾಕ್ಷಾರಸದ ಪಾತ್ರೆಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತೆಗೆದುಕೋ.</verse>
				<verse number="16">ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತ ಕದಲಿ ಓಲಾಡುವರು.”</verse>
				<verse number="17">ಆಗ ನಾನು ಪಾತ್ರೆಯನ್ನು ಯೆಹೋವ ದೇವರ ಕೈಯಿಂದ ತೆಗೆದುಕೊಂಡು, ಯೆಹೋವ ದೇವರು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು.</verse>
				<verse number="18">ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅದರ ಅರಸುಗಳಿಗೂ, ಅಧಿಕಾರಿಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳು ಮಾಡಿ, ಭಯಕ್ಕೂ, ಪರಿಹಾಸ್ಯಕ್ಕೂ, ಶಾಪಕ್ಕೂ ಗುರಿ ಮಾಡುವ ಹಾಗೆ ಕುಡಿಸಿದೆನು.</verse>
				<verse number="19">ಈಜಿಪ್ಟಿನ ಅರಸನಾದ ಫರೋಹನಿಗೂ, ಅವನ ಸೇವಕರಿಗೂ, ಅವನ ಅಧಿಕಾರಿಗಳಿಗೂ, ಅವನ ಎಲ್ಲಾ ಜನರಿಗೂ,</verse>
				<verse number="20">ವಿದೇಶೀಯ ಜನರೆಲ್ಲರಿಗೂ, ಊಚ್ ದೇಶದ ಅರಸರೆಲ್ಲರಿಗೂ, ಫಿಲಿಷ್ಟಿಯ ದೇಶದ ಅರಸರಾದ, ಅಷ್ಕೆಲೋನಿಗೂ, ಗಾಜಕ್ಕೂ, ಎಕ್ರೋನಿಗೂ, ಅಷ್ಡೋದಿನ ಉಳಿದವರಿಗೂ,</verse>
				<verse number="21">ಎದೋಮಿಗೂ, ಮೋವಾಬಿಗೂ, ಅಮ್ಮೋನ್ಯರಿಗೂ,</verse>
				<verse number="22">ಟೈರಿನ ಅರಸರೆಲ್ಲರಿಗೂ, ಸೀದೋನಿನ ಅರಸರೆಲ್ಲರಿಗೂ, ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ,</verse>
				<verse number="23">ದೆದಾನಿಗೂ, ತೇಮಾಕ್ಕೂ, ಬೂಜಿಗೂ, ಕಟ್ಟಕಡೆಯ ಮೂಲೆಯವರೆಗೂ,</verse>
				<verse number="24">ಅರೇಬಿಯದ ಅರಸರೆಲ್ಲರಿಗೂ, ಮರುಭೂಮಿಯಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ,</verse>
				<verse number="25">ಜಿಮ್ರಿಯ ಅರಸರೆಲ್ಲರಿಗೂ, ಏಲಾಮಿನ ಅರಸರೆಲ್ಲರಿಗೂ, ಮೇದ್ಯದ ಅರಸರೆಲ್ಲರಿಗೂ,</verse>
				<verse number="26">ಹತ್ತಿರದಲ್ಲಿಯೂ, ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿರುವ ಉತ್ತರ ದಿಕ್ಕಿನ ಅರಸರೆಲ್ಲರಿಗೂ, ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯಗಳಿಗೂ ಕುಡಿಸಿದೆನು. ಶೇಷಕಿನ ಅರಸನು ಅವರ ತರುವಾಯ ಕುಡಿಯುವನು.</verse>
				<verse number="27">“ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಖಡ್ಗದ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರಿ.’</verse>
				<verse number="28">ಅವರು ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಂಡು ಕುಡಿಯಲು ತಿರಸ್ಕರಿಸಿದರೆ, ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀವು ನಿಶ್ಚಯವಾಗಿ ಕುಡಿಯಬೇಕು.</verse>
				<verse number="29">ಏಕೆಂದರೆ ಇಗೋ, ನನ್ನ ಹೆಸರಿನಿಂದ ಕರೆಯಲಾಗಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವುದಕ್ಕೆ ಆರಂಭ ಮಾಡುತ್ತೇನೆ. ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿಕೊಳ್ಳುವುದಿಲ್ಲ. ಏಕೆಂದರೆ ನಾನು ಭೂನಿವಾಸಿಗಳೆಲ್ಲರ ಮೇಲೆ ಖಡ್ಗವನ್ನು ಕರೆಯುತ್ತೇನೆಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’</verse>
				<verse number="30">“ಆದ್ದರಿಂದ ನೀನು ಅವರಿಗೆ ವಿರೋಧವಾಗಿ ಈ ವಾಕ್ಯಗಳನ್ನೆಲ್ಲಾ ಪ್ರವಾದಿಸಿ, ಅವರಿಗೆ ಹೇಳತಕ್ಕದ್ದೇನೆಂದರೆ, “ ‘ಯೆಹೋವ ದೇವರು ಉನ್ನತದಿಂದ ಗರ್ಜಿಸಿ, ತಮ್ಮ ಪರಿಶುದ್ಧ ನಿವಾಸದೊಳಗಿಂದ ತಮ್ಮ ಶಬ್ದವನ್ನು ಕೊಡುವರು. ತಮ್ಮ ನಿವಾಸದ ಮೇಲೆ ಗಟ್ಟಿಯಾಗಿ ಗರ್ಜಿಸಿ, ದ್ರಾಕ್ಷಿ ತುಳಿಯುವವರ ಹಾಗೆ ಆರ್ಭಟವನ್ನು ಭೂನಿವಾಸಿಗಳೆಲ್ಲರಿಗೆ ವಿರೋಧವಾಗಿ ಎತ್ತುವರು.</verse>
				<verse number="31">ಭೂಮಿಯ ಅಂತ್ಯಗಳವರೆಗೆ ಘೋಷವು ಬರುವುದು. ಯೆಹೋವ ದೇವರಿಗೆ ಜನಾಂಗಗಳ ಸಂಗಡ ವ್ಯಾಜ್ಯವಿದೆ. ಅವರು ಎಲ್ಲಾ ಮನುಷ್ಯರ ಸಂಗಡ ನ್ಯಾಯಕ್ಕೆ ನಿಲ್ಲುವರು. ದುಷ್ಟರನ್ನು ಖಡ್ಗಕ್ಕೆ ಒಪ್ಪಿಸುವರು,’ ” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="32">ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಜನಾಂಗದಿಂದ ಜನಾಂಗಕ್ಕೆ ಕೇಡು ಹೊರಡುವುದು. ಭೂಮಿಯ ಮೇರೆಗಳಿಂದ ಮಹಾ ಬಿರುಗಾಳಿ ಏಳುವುದು.”</verse>
				<verse number="33">ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯವರೆಗೆ ಯೆಹೋವ ದೇವರಿಂದ ಹತರಾದವರು ಇರುವರು. ಅವರಿಗೋಸ್ಕರ ಗೋಳಾಡುವುದಿಲ್ಲ. ಅವರನ್ನು ಕೂಡಿಸುವುದಿಲ್ಲ. ಅವರನ್ನು ಹೂಳಿಡುವುದಿಲ್ಲ. ಅವರು ಭೂಮಿಯ ಮೇಲೆ ಗೊಬ್ಬರದಂತಿರುವರು.</verse>
				<verse number="34">ಕುರುಬರೇ, ಗೋಳಿಟ್ಟು ಕೂಗಿರಿ. ಮಂದೆಯಲ್ಲಿನ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ. ಏಕೆಂದರೆ ನಿಮ್ಮನ್ನು ಕೊಲ್ಲುವುದಕ್ಕೂ, ಚದರಿಸುವುದಕ್ಕೂ ದಿನಗಳು ತುಂಬಿ ಇವೆ. ಆಗ ನೀವು ಒಡೆದುಹೋದ ಅಂದವಾದ ಪಾತ್ರೆಯಂತೆ ಬೀಳುವಿರಿ.</verse>
				<verse number="35">ಆಗ ಕುರುಬರಿಗೆ ಓಡಿ ಹೋಗುವುದಕ್ಕೂ, ಮಂದೆಯ ಪ್ರಮುಖರಿಗೆ ತಪ್ಪಿಸಿಕೊಳ್ಳುವುದಕ್ಕೂ ಮಾರ್ಗವಿಲ್ಲದೆ ಹೋಗುವುದು.</verse>
				<verse number="36">ಕುರುಬರ ಕೂಗಿನ ಶಬ್ದವು, ಮಂದೆಯ ಗೋಳಾಡುವಿಕೆಯೂ ಪ್ರಮುಖರಿಗೆ ಕೇಳಿಸುತ್ತಿದೆ. ಏಕೆಂದರೆ ಯೆಹೋವ ದೇವರು ಅವರ ಮೇವಿನ ಸ್ಥಳವನ್ನು ಹಾಳು ಮಾಡಿದ್ದಾರೆ.</verse>
				<verse number="37">ಸಮಾಧಾನವುಳ್ಳ ಗೋಮಾಳಗಳು ಯೆಹೋವ ದೇವರ ಕೋಪದ ದೆಸೆಯಿಂದ ಕೆಡವಿಬಿದ್ದವು.</verse>
				<verse number="38">ಅವರು ಸಿಂಹದಂತೆ ತಮ್ಮ ಗವಿಯನ್ನು ತೊರೆದುಬಿಟ್ಟಿದ್ದಾರೆ. ಏಕೆಂದರೆ ಉಪದ್ರವ ಪಡಿಸುವವನ ಉರಿಯ ನಿಮಿತ್ತವೂ, ಅವರ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.</verse>
			</chapter>
			<chapter number="26">
				<verse number="1">ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ದೊರೆತನದ ಪ್ರಾರಂಭದಲ್ಲಿ ಈ ವಾಕ್ಯವು ಯೆಹೋವ ದೇವರಿಂದ ಉಂಟಾಯಿತು.</verse>
				<verse number="2">“ಯೆಹೋವ ದೇವರು ಹೀಗೆ ಹೇಳುತ್ತಾನೆ: ಯೆಹೋವ ದೇವರು ಆಲಯದ ಅಂಗಳದಲ್ಲಿ ನಿಂತುಕೊಂಡು, ಯೆಹೋವ ದೇವರ ಆಲಯದಲ್ಲಿ ಆರಾಧಿಸುವುದಕ್ಕೆ ಬರುವ ಯೆಹೂದದ ಪಟ್ಟಣದವರೆಲ್ಲರಿಗೆ ಹೇಳಬೇಕೆಂದು ನಾನು ನಿನಗೆ ಆಜ್ಞಾಪಿಸಿದ ವಾಕ್ಯಗಳನ್ನೆಲ್ಲಾ ಹೇಳು. ಒಂದು ಮಾತಾದರೂ ಕಡಿಮೆ ಮಾಡಬೇಡ.</verse>
				<verse number="3">ಒಂದು ವೇಳೆ ಅವರು ಕೇಳಿ, ನಾನು ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರಿಗೆ ಮಾಡುವುದಕ್ಕೆ ಆಲೋಚಿಸಿದ ಕೇಡಿನ ವಿಷಯ ಪಶ್ಚಾತ್ತಾಪ ಪಡುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿಕೊಂಡಾರು.</verse>
				<verse number="4">ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾನೆ, ನೀವು ನನಗೆ ಕಿವಿಗೊಡದೆ, ನಾನು ನಿಮ್ಮ ಮುಂದೆ ಇಟ್ಟ ನನ್ನ ನಿಯಮದಲ್ಲಿ ನಡೆದುಕೊಳ್ಳದೆ,</verse>
				<verse number="5">ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳುಹಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆ ಹೋದರೆ,</verse>
				<verse number="6">ಆಗ ನಾನು ಈ ಆಲಯವನ್ನು ಶೀಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲಾ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.’ ”</verse>
				<verse number="7">ಹೀಗೆ ಯೆರೆಮೀಯನು ಈ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಸಾರುವುದನ್ನು ಯಾಜಕರೂ, ಪ್ರವಾದಿಗಳೂ, ಜನರೆಲ್ಲರೂ ಕೇಳುತ್ತಿದ್ದರು.</verse>
				<verse number="8">ಯೆರೆಮೀಯನು ತಾನು ಜನರೆಲ್ಲರಿಗೆ ಹೇಳಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದನ್ನೆಲ್ಲಾ ಹೇಳಿ ತೀರಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ, ಜನರೆಲ್ಲರೂ ಅವನನ್ನು ಹಿಡಿದು, “ನೀನು ನಿಶ್ಚಯವಾಗಿ ಸಾಯಬೇಕು.</verse>
				<verse number="9">ಈ ದೇವಾಲಯಕ್ಕೆ ಶೀಲೋವಿನ ಹಾಗೆ ಆಗುವುದೆಂದೂ, ಈ ಪಟ್ಟಣವೂ ನಿವಾಸಿಗಳಿಲ್ಲದೆ ಹಾಳಾಗುವುದೆಂದೂ ಯೆಹೋವ ದೇವರ ಹೆಸರಿನಲ್ಲಿ ಏಕೆ ನೀನು ಪ್ರವಾದಿಸಿದ್ದೀ?” ಎಂದರು. ಆಗ ಜನರೆಲ್ಲರು ಯೆಹೋವ ದೇವರ ಆಲಯದಲ್ಲಿ ಯೆರೆಮೀಯನಿಗೆ ವಿರೋಧವಾಗಿ ಕೂಡಿಕೊಂಡರು.</verse>
				<verse number="10">ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿದಾಗ, ಅರಸನ ಅರಮನೆಯಿಂದ ಯೆಹೋವ ದೇವರ ಆಲಯಕ್ಕೆ ಬಂದು, ಯೆಹೋವ ದೇವರ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಕುಳಿತುಕೊಂಡರು.</verse>
				<verse number="11">ಆಗ ಯಾಜಕರೂ, ಪ್ರವಾದಿಗಳೂ, ಅಧಿಕಾರಿಗಳಿಗೂ, ಜನರೆಲ್ಲರಿಗೂ, “ಈ ಮನುಷ್ಯನು ಮರಣಕ್ಕೆ ತಕ್ಕವನು. ಏಕೆಂದರೆ ನಿಮ್ಮ ಕಿವಿಗಳಿಂದಲೇ ನೀವು ಕೇಳಿದ ಪ್ರಕಾರ, ಇವನು ಈ ಪಟ್ಟಣಕ್ಕೆ ವಿರೋಧವಾಗಿ ಪ್ರವಾದಿಸಿದ್ದಾನೆ,” ಎಂದರು.</verse>
				<verse number="12">ಆಗ ಯೆರೆಮೀಯನು ಪ್ರಧಾನರೆಲ್ಲರಿಗೂ ಜನರೆಲ್ಲರಿಗೂ: “ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಆಲಯಕ್ಕೆ ವಿರೋಧವಾಗಿಯೂ, ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿಸುವುದಕ್ಕೆ ಯೆಹೋವ ದೇವರು ನನ್ನನ್ನು ಕಳುಹಿಸಿದ್ದಾರೆ.</verse>
				<verse number="13">ಹೀಗಿರುವುದರಿಂದ ನಿಮ್ಮ ಮಾರ್ಗಗಳನ್ನೂ, ನಿಮ್ಮ ಕೃತ್ಯಗಳನ್ನೂ ತಿದ್ದಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ವಿಧೇಯರಾಗಿರಿ. ಆಗ ಯೆಹೋವ ದೇವರು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.</verse>
				<verse number="14">ನಾನಾದರೋ ನಿಮ್ಮ ಕೈಯಲ್ಲಿ ಇದ್ದೇನೆ. ನಿಮಗೆ ಒಳ್ಳೆಯದಾಗಿಯೂ, ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ.</verse>
				<verse number="15">ಆದರೂ ನೀವು ನನ್ನನ್ನು ಕೊಂದುಹಾಕಿದರೆ, ನಿಮ್ಮ ಮೇಲೆಯೂ, ಈ ಪಟ್ಟಣದ ಮೇಲೆಯೂ, ಅದರ ನಿವಾಸಿಗಳ ಮೇಲೆಯೂ ನಿರ್ದೋಷಿಯ ರಕ್ತವನ್ನು ಬರಮಾಡುತ್ತೀರೆಂದು ನಿಶ್ಚಯವಾಗಿ ತಿಳಿದುಕೊಳ್ಳಿರಿ. ಈ ವಾಕ್ಯಗಳನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದನು.</verse>
				<verse number="16">ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ, “ಈ ಮನುಷ್ಯನು ಮರಣದಂಡನೆಗೆ ತಕ್ಕವನಲ್ಲ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಹೆಸರಿನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ,” ಎಂದರು.</verse>
				<verse number="17">ದೇಶದ ಹಿರಿಯರಲ್ಲಿ ಕೆಲವರು ಎದ್ದು ಜನರ ಕೂಟಕ್ಕೆಲ್ಲಾ ಹೇಳಿದ್ದೇನೆಂದರೆ:</verse>
				<verse number="18">“ಮೊರೇಷೆತಿನವನಾದ ಮೀಕಾಯನು ಯೆಹೂದದ ಅರಸನಾದ ಹಿಜ್ಕೀಯನ ದಿನಗಳಲ್ಲಿ ಪ್ರವಾದಿಸಿ, ಯೆಹೂದದ ಜನರಿಗೆಲ್ಲಾ ಹೇಳಿದ್ದೇನೆಂದರೆ: ‘ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಚೀಯೋನನ್ನು ಹೊಲದ ಹಾಗೆ ಉಳಲಾಗುವುದು; ಯೆರೂಸಲೇಮು ಹಾಳುದಿಬ್ಬಗಳಾಗುವುದು; ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.’</verse>
				<verse number="19">ಯೆಹೂದದ ಅರಸನಾದ ಹಿಜ್ಕೀಯನೂ, ಎಲ್ಲಾ ಯೆಹೂದ್ಯರೂ ಅವನನ್ನು ಕೊಂದು ಹಾಕಿದರೋ? ಇಲ್ಲವೇ ಇಲ್ಲ. ಅವನು ಯೆಹೋವ ದೇವರಿಗೆ ಭಯಪಟ್ಟು, ಯೆಹೋವ ದೇವರ ಸಮ್ಮುಖದಲ್ಲಿ ಮೊರೆಯಿಟ್ಟನಲ್ಲವೋ? ಆಮೇಲೆ ಯೆಹೋವ ದೇವರು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪ ಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು!” ಎಂದರು.</verse>
				<verse number="20">ಕಿರ್ಯತ್ ಯಾರೀಮಿನವನಾದ ಶೆಮಾಯನ ಮಗ ಊರೀಯ ಎಂಬುವವನು ಸಹ ಯೆಹೋವ ದೇವರ ಹೆಸರಿನಲ್ಲಿ ಪ್ರವಾದಿಸುತ್ತಿರಲಾಗಿ ಯೆರೆಮೀಯನ ಎಲ್ಲಾ ಮಾತುಗಳ ಪ್ರಕಾರ, ಈ ಪಟ್ಟಣಕ್ಕೂ, ಈ ದೇಶಕ್ಕೂ ವಿರೋಧವಾಗಿ ಪ್ರವಾದಿಸಿದನು.</verse>
				<verse number="21">ಆಗ ಅರಸನಾದ ಯೆಹೋಯಾಕೀಮನೂ, ಅವನ ಪರಾಕ್ರಮಶಾಲಿಗಳೆಲ್ಲರೂ, ಪ್ರಧಾನರೆಲ್ಲರೂ ಅವನ ಮಾತುಗಳನ್ನೆಲ್ಲಾ ಕೇಳಿದಾಗ, ಅರಸನು ಅವನನ್ನು ಕೊಂದುಹಾಕಬೇಕೆಂದಿದ್ದನು. ಆದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ, ಈಜಿಪ್ಟಿಗೆ ಸೇರಿಕೊಂಡನು.</verse>
				<verse number="22">ಆದರೆ ಅರಸನಾದ ಯೆಹೋಯಾಕೀಮನು ಈಜಿಪ್ಟ್ ಜನರನ್ನು, ಅಕ್ಬೋರನ ಮಗ ಎಲ್ನಾಥಾನನನ್ನೂ, ಅವನ ಸಂಗಡ ಇನ್ನೂ ಕೆಲವರನ್ನೂ ಈಜಿಪ್ಟಿಗೆ ಕಳುಹಿಸಿದನು.</verse>
				<verse number="23">ಅವರು ಊರೀಯನನ್ನು ಈಜಿಪ್ಟಿನಿಂದ ತೆಗೆದುಕೊಂಡು ಅರಸನಾದ ಯೆಹೋಯಾಕೀಮನ ಬಳಿಗೆ ತಂದರು. ಇವನು ಅವನನ್ನು ಖಡ್ಗದಿಂದ ಹೊಡೆದು, ಅವನ ಹೆಣವನ್ನು ಸಾಧಾರಣವಾದ ಜನರ ಸಮಾಧಿಗಳಲ್ಲಿ ಹಾಕಿಸಿದನು.</verse>
				<verse number="24">ಇತ್ತ ಯಾಜಕರೂ, ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ, ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು.</verse>
			</chapter>
			<chapter number="27">
				<verse number="1">ಯೆಹೂದದ ಅರಸನಾದ ಯೋಷೀಯನ ಮಗನೂ, ಯೆಹೋಯಾಕೀಮನ ದೊರೆತನದ ಪ್ರಾರಂಭದಲ್ಲಿ ಈ ವಾಕ್ಯವು ಯೆಹೋವ ದೇವರಿಂದ ಯೆರೆಮೀಯನಿಗೆ ಬಂತು.</verse>
				<verse number="2">ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಬಂಧನಗಳನ್ನೂ ನೊಗಗಳನ್ನೂ ಮಾಡಿಸಿಕೊಂಡು ನಿನ್ನ ಕುತ್ತಿಗೆಯ ಮೇಲೆ ಇಡು.</verse>
				<verse number="3">ಅವುಗಳನ್ನು ಎದೋಮಿನ ಅರಸನಿಗೂ, ಮೋವಾಬಿನ ಅರಸನಿಗೂ, ಅಮ್ಮೋನ್ಯರ ಅರಸನಿಗೂ, ಟೈರಿನ ಅರಸನಿಗೂ, ಸೀದೋನಿನ ಅರಸನಿಗೂ, ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಯೆರೂಸಲೇಮಿನಲ್ಲಿ ಬಂದಿರುವ ರಾಯಭಾರಿಗಳ ಕೈಯಿಂದ ಕಳುಹಿಸು.</verse>
				<verse number="4">‘ಇಸ್ರಾಯೇಲರ ದೇವರೂ ಸೇನಾಧೀಶ್ವರರೂ ಆದ ಯೆಹೋವ ದೇವರು ನಿಮ್ಮ ಯಜಮಾನರಿಗೆ ನೀವು ಹೀಗೆ ಅರಿಕೆಮಾಡುವಂತೆ ಅಪ್ಪಣೆಕೊಟ್ಟಿದ್ದಾರೆ ಎಂಬುದಾಗಿ ಹೇಳಿ ಅವರು, “ತಮ್ಮ ತಮ್ಮ ಯಜಮಾನರಿಗೆ ಹೀಗೆ ಹೇಳಬೇಕು:</verse>
				<verse number="5">ನಾನೇ ಭೂಮಿಯನ್ನೂ, ಭೂಮಿಯ ಮೇಲಿರುವ ಮನುಷ್ಯರನ್ನೂ, ಮೃಗಗಳನ್ನೂ ನನ್ನ ಮಹಾ ಬಲದಿಂದಲೂ, ನನ್ನ ಚಾಚಿದ ಕೈಯಿಂದಲೂ ಉಂಟುಮಾಡಿ, ನನಗೆ ಸರಿ ತೋಚಿದವರಿಗೆ ಅದನ್ನು ಕೊಟ್ಟಿದ್ದೇನೆ.</verse>
				<verse number="6">ಈಗ ಈ ನಾಡುಗಳನ್ನೆಲ್ಲಾ ಬಾಬಿಲೋನಿಯದ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶ ಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ.</verse>
				<verse number="7">ಅವನ ದೇಶಕ್ಕೆ ನಿಯಮಿತ ಕಾಲ ಬರುವ ತನಕ, ಎಲ್ಲ ರಾಷ್ಟ್ರಗಳು ಅವನಿಗೂ, ಅವನ ಮಗನಿಗೂ, ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ, ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು,” ಎಂಬುದು.</verse>
				<verse number="8">“ ‘ “ಆದರೆ ಯಾವುದೇ ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲು ಕೊಡಲು ಒಪ್ಪದೆ ಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ, ಕ್ಷಾಮ, ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೇ ಅದನ್ನು ನಿರ್ಮೂಲ ಮಾಡಿಸುವೆನು, ಇದು ಯೆಹೋವ ದೇವರಾದ ನನ್ನ ನುಡಿ.</verse>
				<verse number="9">‘ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ,’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು, ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ.</verse>
				<verse number="10">ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು, ನೀವು ದೇಶ ಭ್ರಷ್ಟರಾಗಿ ನಾಶವಾಗುವಿರಿ.</verse>
				<verse number="11">ಯಾವ ರಾಷ್ಟ್ರ ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು, ಅವನ ಅಡಿಯಾಳಾಗುವುದೋ; ಆ ರಾಷ್ಟ್ರದವರನ್ನು ನಾನು ಅವರ ಸ್ವಂತ ನಾಡಿನಲ್ಲೇ ನೆಲೆಗೊಳಿಸುವೆನು. ಅವರು ಅಲ್ಲೇ ಉತ್ತು, ಬಿತ್ತು ವಾಸಮಾಡುವರು. ಯೆಹೋವ ದೇವರಾದ ನಾನೇ ಇದನ್ನು ನುಡಿದಿದ್ದೇನೆ.” ’ ”</verse>
				<verse number="12">ಯೆಹೂದದ ಅರಸ ಚಿದ್ಕೀಯನಿಗೂ ನಾನು ಅದೇ ಮಾತುಗಳನ್ನು ಹೇಳಿದೆ: “ನೀವು ಬಾಬಿಲೋನಿನ ಅರಸನ ನೊಗಕ್ಕೆ ಹೆಗಲು ಕೊಟ್ಟು, ಅವನಿಗೂ, ಅವನ ಜನರಿಗೂ ಅಡಿಯಾಳಾಗಬೇಕು. ಆಗ ಬದುಕುವಿರಿ.</verse>
				<verse number="13">ಬಾಬಿಲೋನಿಯದ ಅರಸನ ಅಡಿಯಾಳಾಗಲು ನಿರಾಕರಿಸಿದ ರಾಷ್ಟ್ರವು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯಬೇಕಾಗುವುದೆಂದು ಯೆಹೋವ ದೇವರೇ ನುಡಿದಿದ್ದಾರೆ. ಅಂಥ ಗತಿ ನಿಮಗೂ, ನಿಮ್ಮ ಪ್ರಜೆಗೂ ಏಕೆ ಬರಬೇಕು?</verse>
				<verse number="14">‘ನೀವು ಬಾಬಿಲೋನಿಯದ ಅರಸನ ಅಡಿಯಾಳಾಗುವುದಿಲ್ಲ,’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ, ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.</verse>
				<verse number="15">ಅವರನ್ನು ನಾನು ಕಳುಹಿಸಲಿಲ್ಲ, ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾ ಇದ್ದಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಮತ್ತು ನಿಮಗೆ ಪ್ರವಾದಿಸುವ ಪ್ರವಾದಿಗಳನ್ನು ಹೊರದೂಡಬೇಕಾಗುವುದು, ನೀವು ನಾಶವಾಗುವಿರಿ, ಎಂದು ಯೆಹೋವ ದೇವರೇ ನುಡಿದಿದ್ದಾರೆ.”</verse>
				<verse number="16">ಬಳಿಕ ನಾನು ಯಾಜಕರಿಗೂ, ಈ ಜನರೆಲ್ಲರಿಗೂ ಹೀಗೆಂದು ಸಾರಿದೆ: “ಇಗೋ, ಕೇಳಿ ಯೆಹೋವ ದೇವರ ನುಡಿ: ‘ದೇವಾಲಯದ ಉಪಕರಣಗಳನ್ನು ಬೇಗನೆ ಬಾಬಿಲೋನಿನಿಂದ ಹಿಂದಕ್ಕೆ ತರಲಾಗುವುದು,’ ಎಂಬುದಾಗಿ ನಿಮಗೆ ಪ್ರವಾದಿಸುವವರ ಮಾತುಗಳನ್ನು ಕೇಳಬೇಡಿ, ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.</verse>
				<verse number="17">ಅವರಿಗೆ ನೀವು ಕಿವಿಗೊಡಲೇಬಾರದು. ಬಾಬಿಲೋನಿಯದ ಅರಸನಿಗೆ ಅಡಿಯಾಳಾಗಿರಿ. ಆಗ ಬದುಕುವಿರಿ. ಈ ನಗರವೇಕೆ ನಾಶವಾಗಬೇಕು?</verse>
				<verse number="18">ಅವರು ನಿಜವಾದ ಪ್ರವಾದಿಗಳಾಗಿದ್ದರೆ, ಯೆಹೋವ ದೇವರ ವಾಕ್ಯ ಅವರಲ್ಲಿ ನೆಲಸಿದ್ದರೆ, ದೇವಾಲಯದಲ್ಲೂ, ಯೆಹೂದದ ಅರಸನ ಅರಮನೆಯಲ್ಲೂ, ಯೆರೂಸಲೇಮಿನಲ್ಲೂ, ಇನ್ನು ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಸೇನಾಧೀಶ್ವರ ಯೆಹೋವ ದೇವರಿಗೆ ವಿಜ್ಞಾಪನೆಮಾಡಿ ಬೇಡಿಕೊಳ್ಳಲಿ.</verse>
				<verse number="19">ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ, ಯೆಹೂದದ ಅರಸನೂ ಆದ ಯೆಕೊನ್ಯನನ್ನು ಮತ್ತು ಯೆಹೂದದ ಹಾಗೂ ಯೆರೂಸಲೇಮಿನ ಎಲ್ಲ ಮಂತ್ರಿಗಳನ್ನು ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ, ಕೆಲವು ವಸ್ತುಗಳನ್ನು ಅಂದರೆ ಕಂಬಗಳು, ಕಂಚಿನ ಕಡಲು, ಪೀಠಗಳು, ನಗರದಲ್ಲಿ ಉಳಿದಿರುವ ಮತ್ತಿತರ ಉಪಕರಣಗಳು ಇವನ್ನು ತೆಗೆದುಕೊಂಡು ಹೋಗಲಿಲ್ಲ.</verse>
				<verse number="20">ದೇವಾಲಯದಲ್ಲೂ, ಯೆಹೂದದ ಅರಸನ ಅರಮನೆಯಲ್ಲೂ, ಯೆರೂಸಲೇಮಿನಲ್ಲೂ ಉಳಿದಿರುವ ಈ ಉಪಕರಣಗಳ ವಿಷಯವಾಗಿ ಇಸ್ರಾಯೇಲರ ದೇವರೂ ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ:</verse>
				<verse number="21">‘ಅವುಗಳನ್ನು ಬಾಬಿಲೋನಿಗೆ ಒಯ್ಯಲಾಗುವುದು. ನಾನು ಬಿಡಿಸುವತನಕ ಅವು ಅಲ್ಲೇ ಇರುವುವು. ಬಳಿಕ ನಾನು ಅವುಗಳನ್ನು ತಂದು ಈ ಸ್ಥಳಕ್ಕೆ ಸೇರಿಸುವೆನು.’ ಇದು ಯೆಹೋವ ದೇವರಾದ ನನ್ನ ನುಡಿ.”</verse>
			</chapter>
			<chapter number="28">
				<verse number="1">ಅದೇ ವರ್ಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಪ್ರಾರಂಭದಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ ಗಿಬ್ಯೋನಿನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾದಿಯು ಯೆಹೋವ ದೇವರ ಆಲಯದಲ್ಲಿ ಯಾಜಕರ ಮುಂದೆಯೂ, ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನೆಂದರೆ,</verse>
				<verse number="2">“ಇಸ್ರಾಯೇಲಿನ ದೇವರೂ ಸೇನಾಧೀಶ್ವರ ಯೆಹೋವ ದೇವರೂ ಹೀಗೆ ಹೇಳುತ್ತಾರೆ: ‘ನಾನು ಬಾಬಿಲೋನಿನ ಅರಸನ ನೊಗವನ್ನು ಮುರಿದಿದ್ದೇನೆ.</verse>
				<verse number="3">ಎರಡು ವರ್ಷದೊಳಗಾಗಿ ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದುಕೊಂಡು, ಬಾಬಿಲೋನಿಗೆ ಒಯ್ದ ಯೆಹೋವ ದೇವರ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.</verse>
				<verse number="4">ಯೆಹೂದದ ಅರಸನಾದ ಯೆಹೋಯಾಕೀಮನ ಮಗ ಯೆಕೊನ್ಯನನ್ನು ಬಾಬಿಲೋನಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಬಾಬಿಲೋನಿನ ಅರಸನ ನೊಗವನ್ನು ಮುರಿದುಬಿಡುವೆನು.”</verse>
				<verse number="5">ಆಗ ಪ್ರವಾದಿಯಾದ ಯೆರೆಮೀಯನು ಯಾಜಕರ ಮುಂದೆಯೂ, ಯೆಹೋವ ದೇವರ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯನಿಗೆ,</verse>
				<verse number="6">“ಆಮೆನ್, ಯೆಹೋವ ದೇವರು ಹಾಗೆಯೇ ಮಾಡಲಿ; ನೀನು ಪ್ರವಾದಿಸಿದೆ; ನಿನ್ನ ವಾಕ್ಯಗಳನ್ನು ಯೆಹೋವ ದೇವರು ನೆರವೇರಿಸಿ, ಯೆಹೋವ ದೇವರ ಆಲಯದ ಪಾತ್ರೆಗಳನ್ನೂ, ಸೆರೆಯವರೆಲ್ಲರನ್ನೂ ಬಾಬಿಲೋನಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.</verse>
				<verse number="7">ಆದರೂ ನಾನು ನಿನಗೂ, ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು.</verse>
				<verse number="8">ನನಗೆ ಮುಂಚೆಯೂ, ನಿನಗೆ ಮುಂಚೆಯೂ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ, ದೊಡ್ಡ ರಾಜ್ಯಗಳಿಗೂ ವಿರೋಧವಾಗಿ ಯುದ್ಧವನ್ನು ಕೇಡನ್ನೂ, ವ್ಯಾಧಿಯನ್ನೂ ಕುರಿತು ಪ್ರವಾದಿಸಿದರು.</verse>
				<verse number="9">ಸಮಾಧಾನವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ, ಆ ಪ್ರವಾದಿಯ ವಾಕ್ಯವು ಉಂಟಾಗುವಾಗ, ಅವನು ಯೆಹೋವ ದೇವರಿಂದ ನಿಜವಾಗಿ ಕಳುಹಿಸಲಾದ ಪ್ರವಾದಿ, ಎಂದು ತಿಳಿಯತಕ್ಕದ್ದು,” ಎಂದನು.</verse>
				<verse number="10">ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಕುತ್ತಿಗೆಯಿಂದ ನೊಗವನ್ನು ತೆಗೆದು, ಅದನ್ನು ಮುರಿದುಬಿಟ್ಟನು.</verse>
				<verse number="11">ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನೆಂದರೆ, “ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇದೇ ಪ್ರಕಾರ ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿಗೆಯ ಮೇಲಿನಿಂದ ಮುರಿದು ಹಾಕುವೆನು,’ ” ಎಂದನು. ಆಗ ಪ್ರವಾದಿಯಾದ ಯೆರೆಮೀಯನು ತನ್ನ ಮಾರ್ಗವಾಗಿ ಹೊರಟುಹೋದನು.</verse>
				<verse number="12">ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆಮೀಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ, ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಉಂಟಾಗಿ,</verse>
				<verse number="13">“ನೀನು ಹೋಗಿ ಹನನ್ಯನಿಗೆ ಹೀಗೆ ಹೇಳು: ‘ನೀವು ಮರದ ನೊಗಗಳನ್ನು ಮುರಿದಿದ್ದೀ; ಆದರೆ ಅವಕ್ಕೆ ಬದಲಾಗಿ ನಿನ್ನ ಮೇಲೆ ಕಬ್ಬಿಣದ ನೊಗಗಳನ್ನು ಉಂಟುಮಾಡು,’ ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="14">ಇಸ್ರಾಯೇಲರ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ಈ ಎಲ್ಲಾ ಜನಾಂಗಗಳ ಕುತ್ತಿಗೆಗಳ ಮೇಲೆ ಅವರು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಸೇವೆ ಮಾಡುವ ಹಾಗೆ ಕಬ್ಬಿಣದ ನೊಗವನ್ನು ಇಡುವೆನು. ಅವರು ಅವನಿಗೆ ಸೇವೆಮಾಡುವರು; ಕಾಡುಮೃಗಗಳನ್ನು ಸಹ ಅವನಿಗೆ ಕೊಡುವೆನು.’ ”</verse>
				<verse number="15">ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನೆಂದರೆ, “ಹನನೀಯನೇ, ಕೇಳು. ಯೆಹೋವ ದೇವರು ನಿನ್ನನ್ನು ಕಳುಹಿಸಲಿಲ್ಲ. ಆದರೆ ನೀನು ಈ ಜನರನ್ನು ಸುಳ್ಳಿನಲ್ಲಿ ಭರವಸೆ ಇಡುವಂತೆ ಮಾಡುತ್ತೀ.</verse>
				<verse number="16">ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ನಿನ್ನನ್ನು ಭೂಮಿಯ ಮೇಲಿನಿಂದ ಬಿಸಾಡಿಬಿಡುತ್ತೇನೆ. ಈ ವರ್ಷವೇ ನೀನು ಸಾಯುವೆ. ಏಕೆಂದರೆ ನೀನು ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಬಗೆದಿದ್ದೀ,’ ” ಎಂದನು.</verse>
				<verse number="17">ಹಾಗೆಯೇ ಪ್ರವಾದಿಯಾದ ಹನನ್ಯನು ಅದೇ ವರ್ಷದಲ್ಲಿ ಏಳನೆಯ ತಿಂಗಳಲ್ಲಿ ಸತ್ತನು.</verse>
			</chapter>
			<chapter number="29">
				<verse number="1">ಪ್ರವಾದಿಯಾದ ಯೆರೆಮೀಯನು ಸೆರೆಯಲ್ಲಿರುವ ಹಿರಿಯರಲ್ಲಿ ಉಳಿದವರಿಗೂ ಯಾಜಕರಿಗೂ ಪ್ರವಾದಿಗಳಿಗೂ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ಬಾಬಿಲೋನಿಗೆ ಒಯ್ದ ಜನರೆಲ್ಲರಿಗೂ</verse>
				<verse number="2">ಅರಸನಾದ ಯೆಕೊನ್ಯನೂ ರಾಜಮಾತೆಯೂ ಕಂಚುಕಿಗಳೂ ಯೆಹೂದದ ಯೆರೂಸಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ ಈ ಪತ್ರವನ್ನು ಬರೆದನು.</verse>
				<verse number="3">ಯೆಹೂದದ ಅರಸನಾದ ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಕಳುಹಿಸಿದ ಶಾಫಾನನ ಮಗ ಎಲ್ಲಾಸನ ಕೈಯಿಂದಲೂ ಹಿಲ್ಕೀಯನ ಮಗನಾದ ಗೆಮರೀಯನ ಕೈಯಿಂದಲೂ ಕಳುಹಿಸಿದ ಪತ್ರ:</verse>
				<verse number="4">ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಯೆರೂಸಲೇಮಿನಿಂದ ಬಾಬಿಲೋನಿಗೆ ನಾನು ಕರೆದೊಯ್ದ ಸೆರೆಯವರೆಲ್ಲರಿಗೆ ಹೇಳುವುದೇನೆಂದರೆ:</verse>
				<verse number="5">“ಮನೆಗಳನ್ನು ಕಟ್ಟಿ ವಾಸಮಾಡಿರಿ. ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ.</verse>
				<verse number="6">ಮದುವೆಮಾಡಿಕೊಂಡು, ಪುತ್ರಪುತ್ರಿಯರನ್ನು ಪಡೆಯಿರಿ. ನಿಮ್ಮ ಪುತ್ರರಿಗೆ ಹೆಂಡತಿಯರನ್ನು ಹುಡುಕಿರಿ. ನಿಮ್ಮ ಪುತ್ರಿಯರನ್ನು ಮದುವೆಮಾಡಿಕೊಡಿರಿ; ಅವರು ಪುತ್ರಪುತ್ರಿಯರನ್ನು ಹೆರಲಿ. ಹೀಗೆ ನೀವು ಕಡಿಮೆಯಾಗದೆ, ಅಲ್ಲಿ ಹೆಚ್ಚಿರಿ.</verse>
				<verse number="7">ನಾನು ನಿಮ್ಮನ್ನು ಸೆರೆಯಾಗಿ ಒಯ್ದ ಪಟ್ಟಣದ ಸಮಾಧಾನ ಮತ್ತು ಸಮೃದ್ಧಿಯನ್ನು ಹುಡುಕಿರಿ. ಅದಕ್ಕೋಸ್ಕರ ಯೆಹೋವ ದೇವರಿಗೆ ಪ್ರಾರ್ಥನೆಮಾಡಿರಿ. ಏಕೆಂದರೆ ಅದರ ಸಮಾಧಾನದಿಂದ ನಿಮಗೆ ಸಮಾಧಾನವಾಗುವುದು.”</verse>
				<verse number="8">ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಮಧ್ಯದಲ್ಲಿರುವ ನಿಮ್ಮ ಪ್ರವಾದಿಗಳೂ ನಿಮ್ಮ ಶಕುನದವರೂ ನಿಮಗೆ ಮೋಸಮಾಡದಿರಲಿ. ನೀವು ಕೇಳುವ ನಿಮ್ಮ ಕನಸುಗಳಿಗೆ ಕಿವಿಗೊಡಬೇಡಿರಿ.</verse>
				<verse number="9">ಏಕೆಂದರೆ ಅವರು ನಿಮಗೆ ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="10">ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನಲ್ಲಿ ಎಪ್ಪತ್ತು ವರ್ಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿಸುವೆನು. ನನ್ನ ಒಳ್ಳೆಯ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ, ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.</verse>
				<verse number="11">ನಾನು ನಿಮ್ಮನ್ನು ಕುರಿತು ಮಾಡುವ ಯೋಜನೆಗಳನ್ನು ಬಲ್ಲೆನು. ಅವು ಕೇಡಿಗಲ್ಲ, ಹಿತಕ್ಕಾಗಿರುವ ಯೋಜನೆಗಳು. ನಿಮಗೆ ಭವಿಷ್ಯವನ್ನೂ, ನಿರೀಕ್ಷೆಯನ್ನೂ ಕೊಡುವುದಕ್ಕಿವೆ.</verse>
				<verse number="12">ಆಗ ನನ್ನನ್ನು ಕರೆಯುವಿರಿ. ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ. ನಾನು ನಿಮಗೆ ಕಿವಿಗೊಡುವೆನು.</verse>
				<verse number="13">ನನ್ನನ್ನು ಹುಡುಕುವಿರಿ. ಪೂರ್ಣಹೃದಯದಿಂದ ನನ್ನನ್ನು ಹುಡುಕುವಾಗ, ನನ್ನನ್ನು ಕಂಡುಕೊಳ್ಳುವಿರಿ.</verse>
				<verse number="14">ನಿಮಗೆ ದೊರೆಯುವೆನು. ನಿಮ್ಮ ಸೆರೆಯನ್ನು ತಿರುಗಿಸಿ ನಾನು ನಿಮ್ಮನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಿಂದಲೂ, ಎಲ್ಲಾ ಸ್ಥಳಗಳಿಂದಲೂ ನಿಮ್ಮನ್ನು ಕೂಡಿಸುವೆನು. ನಾನು ಯಾವ ಸ್ಥಳದಿಂದ ನಿಮ್ಮನ್ನು ಸೆರೆಯಾಗಿ ಕಳುಹಿಸಿದೆನೋ, ಆ ಸ್ಥಳಕ್ಕೆ ನಿಮ್ಮನ್ನು ತಿರುಗಿ ಬರಮಾಡುವೆನು.”</verse>
				<verse number="15">ಆದರೆ, “ಯೆಹೋವ ದೇವರು ನಮಗೆ ಬಾಬಿಲೋನಿನಲ್ಲಿ ಪ್ರವಾದಿಗಳನ್ನು ಎಬ್ಬಿಸಿದ್ದಾನೆ,” ಎಂದು ನೀವು ಹೇಳಿದ್ದರಿಂದ,</verse>
				<verse number="16">ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವ ಅರಸನನ್ನು ಕುರಿತು, ನಿಮ್ಮ ಸಂಗಡ ಸೆರೆಗೆ ಹೊರಡದೆ, ಈ ಪಟ್ಟಣದಲ್ಲಿ ವಾಸವಾಗಿರುವ ನಿಮ್ಮ ಸಹೋದರರಾದ ಜನರೆಲ್ಲರನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ</verse>
				<verse number="17">ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ನಾನು ಅವರಲ್ಲಿ ಖಡ್ಗವನ್ನೂ ಕ್ಷಾಮವನ್ನೂ ವ್ಯಾಧಿಯನ್ನೂ ಕಳುಹಿಸಿ, ಅವರನ್ನು ಕೆಟ್ಟವರನ್ನಾಗಿ ಮಾಡಿರುವುದರಿಂದ, ತಿನ್ನಕೂಡದ ಅಸಹ್ಯವಾದ ಅಂಜೂರಗಳ ಹಾಗೆ ಮಾಡುವೆನು.</verse>
				<verse number="18">ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ಹಿಂಸಿಸಿ, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ಭಯಕ್ಕೂ ಪರಿಹಾಸ್ಯಕ್ಕೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.</verse>
				<verse number="19">ಏಕೆಂದರೆ ಅವರು ನನ್ನ ವಾಕ್ಯಗಳನ್ನು ಕೇಳಲಿಲ್ಲ. ನಾನು ಅವರಿಗೆ ನನ್ನ ಸೇವಕರಾದ ಪ್ರವಾದಿಗಳನ್ನು ಬೆಳಿಗ್ಗೆ ಪುನಃ ಕಳುಹಿಸಿದೆನು. ಆದರೆ ಅವರು ಕೇಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="20">ಆದ್ದರಿಂದ ನಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಕಳುಹಿಸಿದ ಸೆರೆಯವರೆಲ್ಲರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ,</verse>
				<verse number="21">ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನು ಪ್ರವಾದಿಸುವ ಕೊಲಾಯನ ಮಗ ಅಹಾಬನ ವಿಷಯವೂ, ಮಾಸೇಯನ ಮಗ ಚಿದ್ಕೀಯನ ವಿಷಯವೂ, ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಒಪ್ಪಿಸುತ್ತೇನೆ. ಅವನು ಅವರನ್ನು ನಿಮ್ಮ ಕಣ್ಣುಗಳ ಮುಂದೆ ಕೊಂದುಹಾಕುವನು.</verse>
				<verse number="22">ಬಾಬಿಲೋನಿನಲ್ಲಿರುವ ಯೆಹೂದದ ಸೆರೆಯವರೆಲ್ಲರು ಅವರಿಂದ ಶಾಪವನ್ನು ತೆಗೆದುಕೊಂಡು, ‘ಬಾಬಿಲೋನಿನ ಅರಸನು ಬೆಂಕಿಯಲ್ಲಿ ಸುಟ್ಟುಬಿಟ್ಟ ಚಿದ್ಕೀಯನ ಹಾಗೆಯೂ, ಅಹಾಬನ ಹಾಗೆಯೂ ಯೆಹೋವ ದೇವರು ನಿನಗೆ ಮಾಡಲಿ,’ ಎಂದು ಹೇಳುವರು.</verse>
				<verse number="23">ಏಕೆಂದರೆ ಅವರು ತಮ್ಮ ನೆರೆಯವರ ಹೆಂಡರ ಸಂಗಡ ವ್ಯಭಿಚಾರ ಮಾಡಿ, ನನ್ನ ಹೆಸರಿನಲ್ಲಿ ಸುಳ್ಳಾಗಿ ನಾನು ಅವರಿಗೆ ಆಜ್ಞಾಪಿಸದೆ ಇದ್ದ ಮಾತುಗಳನ್ನಾಡಿ, ಇಸ್ರಾಯೇಲಿನಲ್ಲಿ ನೀಚತನವನ್ನು ನಡೆಸಿದರು. ನಾನೇ ಅದನ್ನು ತಿಳಿದು ಸಾಕ್ಷಿಯಾಗಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="24">ನೆಹೆಲಾಮ್ಯನಾದ ಶೆಮಾಯನಿಗೆ ನೀನು ಹೀಗೆ ಹೇಳು:</verse>
				<verse number="25">“ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನಿನ್ನ ಹೆಸರಿನಲ್ಲಿ ಯೆರೂಸಲೇಮಿನವರೆಲ್ಲರಿಗೂ, ಮಾಸೇಯನ ಮಗ ಯಾಜಕನಾದ ಚೆಫನ್ಯನಿಗೂ ಯಾಜಕರೆಲ್ಲರಿಗೂ ಪತ್ರಗಳನ್ನು ಕಳುಹಿಸಿದೆಯಲ್ಲಾ?</verse>
				<verse number="26">‘ಏಕೆಂದರೆ, ಹುಚ್ಚನಾದ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವಂಥ ಪ್ರತಿ ಮನುಷ್ಯನಿಗೆ ಯೆಹೋವ ದೇವರ ಆಲಯದಲ್ಲಿ ಅಧಿಕಾರಿಗಳು ಇರುವ ಹಾಗೆಯೂ, ನೀನು ಅಂಥವರನ್ನು ಕೋಳದಲ್ಲಿಯೂ, ಸೆರೆಯಲ್ಲಿಯೂ ಇಡುವ ಹಾಗೆಯೂ, ಯೆಹೋವ ದೇವರು ಯಾಜಕನಾದ ಯೆಹೋಯಾದನಿಗೆ ಬದಲಾಗಿ ನಿನ್ನನ್ನು ಯಾಜಕನಾಗಿ ಇಟ್ಟಿದ್ದಾರೆ.</verse>
				<verse number="27">ಹೀಗಿರಲಾಗಿ ನಿಮಗೆ ತನ್ನನ್ನು ಪ್ರವಾದಿಯಾಗಿ ಮಾಡಿಕೊಳ್ಳುವ ಅನಾತೋತಿನವನಾದ ಯೆರೆಮೀಯನನ್ನು ನೀನು ಏಕೆ ಗದರಿಸಲಿಲ್ಲ?</verse>
				<verse number="28">ಏಕೆಂದರೆ, ಅವನು ಸೆರೆಯು ಬಹಳ ದೀರ್ಘವಾಗುವುದು, ಮನೆಗಳನ್ನು ಕಟ್ಟಿ ವಾಸಮಾಡಿರಿ; ತೋಟಗಳನ್ನು ನೆಟ್ಟು, ಅವುಗಳ ಫಲವನ್ನು ತಿನ್ನಿರಿ; ಎಂದು ನಮಗೆ ಬಾಬಿಲೋನಿಗೆ ಹೇಳಿ ಕಳುಹಿಸಿದ್ದಾನೆ.’ ”</verse>
				<verse number="29">ಆಗ ಯಾಜಕನಾದ ಚೆಫನ್ಯನು ಈ ಪತ್ರವನ್ನು ಪ್ರವಾದಿಯಾದ ಯೆರೆಮೀಯನಿಗೆ ಓದಿ ಹೇಳಿದನು.</verse>
				<verse number="30">ಆಗ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಬಂದಿತು:</verse>
				<verse number="31">“ನೀನು ಸೆರೆಯವರೆಲ್ಲರಿಗೆ ಹೇಳಿ ಕಳುಹಿಸಬೇಕಾದದ್ದೇನೆಂದರೆ, ‘ಯೆಹೋವ ದೇವರು ನೆಹೆಲಾಮ್ಯನಾದ ಶೆಮಾಯನ ವಿಷಯವಾಗಿ ಹೀಗೆ ಹೇಳುತ್ತಾರೆ. ಶೆಮಾಯನು, ನಾನು ಅವನನ್ನು ಕಳುಹಿಸದೆ ಇರುವಾಗ, ನಿಮಗೆ ಪ್ರವಾದಿಸಿ, ನಿಮ್ಮನ್ನು ಸುಳ್ಳಿನಲ್ಲಿ ನಂಬಿಕೆ ಇಡಮಾಡಿದ ಕಾರಣ,</verse>
				<verse number="32">ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ನಾನು ನೆಹೆಲಾಮ್ಯನಾದ ಶೆಮಾಯನನ್ನೂ, ಅವನ ಸಂತಾನವನ್ನೂ ದಂಡಿಸುತ್ತೇನೆ. ಈ ಜನರೊಳಗೆ ವಾಸಿಸುವುದಕ್ಕೆ ಅವನಿಗೆ ಒಬ್ಬನೂ ಇರುವುದಿಲ್ಲ. ನಾನು ನನ್ನ ಜನರಿಗೆ ಮಾಡುವ ಒಳ್ಳೆಯದನ್ನು ಅವನು ನೋಡುವುದಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಅವನು ಯೆಹೋವ ದೇವರಿಗೆ ವಿರೋಧವಾಗಿ ಬೋಧಿಸಿದ್ದಾನೆ.’ ”</verse>
			</chapter>
			<chapter number="30">
				<verse number="1">ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ,</verse>
				<verse number="2">“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ನೀನು ಬರೆದಿಡು.</verse>
				<verse number="3">ಏಕೆಂದರೆ, ದಿನಗಳು ಬರುವವು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ನನ್ನ ಜನರಾದ ಇಸ್ರಾಯೇಲ್ ಹಾಗು ಯೆಹೂದದ ಸೆರೆಯವರನ್ನು ತಿರುಗಿ ಬರಮಾಡುತ್ತೇನೆ. ಆಗ ನಾನು ಅವರ ಪಿತೃಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ. ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು,’ ಎಂದು ಯೆಹೋವ ದೇವರು ಹೇಳುತ್ತಾರೆ.”</verse>
				<verse number="4">ಯೆಹೋವ ದೇವರು ಇಸ್ರಾಯೇಲನ್ನೂ, ಯೆಹೂದವನ್ನೂ ಕುರಿತು ಹೇಳಿದ ವಾಕ್ಯಗಳು ಇವೇ,</verse>
				<verse number="5">“ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನಾವು ನಡುಗುವಿಕೆಯ ಮತ್ತು ಭಯದ ಧ್ವನಿಯನ್ನು ಕೇಳಿದ್ದೇವೆಯೇ ಹೊರತು, ಸಮಾಧಾನದ್ದಲ್ಲ.</verse>
				<verse number="6">ಈಗ ವಿಚಾರಿಸಿ ನೋಡಿರಿ. ಪುರುಷನು ಮಗುವನ್ನು ಹೆರಬಲ್ಲನೇ. ನಾನು ಏಕೆ ಪುರುಷರೆಲ್ಲರೂ ಪ್ರಸವವೇದನೆ ಪಡುವ ಸ್ತ್ರೀಯ ಹಾಗೆ ನಡುವಿನ ಮೇಲಕ್ಕೆ ಕೈ ಇಟ್ಟವರ ಹಾಗೆ ನೋಡುತ್ತೇನೆ; ಏಕೆ ಮುಖಗಳೆಲ್ಲಾ ಕಳೆಗುಂದಿದವು?</verse>
				<verse number="7">ಅಯ್ಯೋ, ಈ ದಿನವು ಘೋರವಾದದ್ದು, ಅದಕ್ಕೆ ಎಣೆ ಇಲ್ಲ; ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.’</verse>
				<verse number="8">“ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ, ‘ನಾನು ಆ ದಿನದಲ್ಲಿ ಅವನು ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದು ಬಿಟ್ಟು, ಬಂಧನಗಳನ್ನು ಕಿತ್ತು ಹಾಕುವೆನು; ಇನ್ನು ವಿದೇಶಿಯರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲಾರರು.</verse>
				<verse number="9">ಆದರೆ ಅವರು ತಮ್ಮ ದೇವರಾದ ಯೆಹೋವ ದೇವರಿಗೂ, ನಾನು ಅವರಿಗೋಸ್ಕರ ಎಬ್ಬಿಸುವ ಅವರ ಅರಸನಾದ ದಾವೀದನಿಗೂ ಸೇವೆಮಾಡುವರು.</verse>
				<verse number="10">“ ‘ಆದ್ದರಿಂದ ನನ್ನ ಸೇವಕನಾದ ಯಾಕೋಬನೇ ಭಯಪಡಬೇಡ, ಇಸ್ರಾಯೇಲೇ ಹೆದರಬೇಡ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಏಕೆಂದರೆ ಇಗೋ, ನಾನು ನಿನ್ನನ್ನು ದೂರದಿಂದಲೇ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ. ಯಾಕೋಬನು ತಿರುಗಿಬಂದು ವಿಶ್ರಾಂತಿಯಲ್ಲಿರುವನು. ಹೆದರಿಸುವವನಿಲ್ಲದೆ ಸುರಕ್ಷಿತವಾಗಿರುವನು.</verse>
				<verse number="11">ಏಕೆಂದರೆ ನಿನ್ನನ್ನು ರಕ್ಷಿಸುವುದಕ್ಕೆ ನಾನು ನಿನ್ನ ಸಂಗಡ ಇದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ನಿನ್ನನ್ನು ಎಲ್ಲಿ ಚದರಿಸಿದೆನೋ, ಆ ಎಲ್ಲಾ ಜನಾಂಗಗಳನ್ನು ನಾನು ಸಂಪೂರ್ಣವಾಗಿ ಮುಗಿಸಿಬಿಟ್ಟಾಗ್ಯೂ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ. ಮಿತಿಯಲ್ಲಿ ನಿನ್ನನ್ನು ಸರಿಪಡಿಸುವೆನು. ನಾನು ಶಿಕ್ಷಿಸದೆ ಬಿಡುವುದಿಲ್ಲ.’</verse>
				<verse number="12">“ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನಿನ್ನ ಗಾಯವು ಗುಣವಾಗದಂಥಾದ್ದು. ನಿನ್ನ ಬಾಸುಂಡೆಯು ಅಘೋರವಾದದ್ದು.</verse>
				<verse number="13">ನಿನಗೋಸ್ಕರ ವಾದಿಸುವವರು ಯಾರೂ ಇರುವುದಿಲ್ಲ. ನಿನ್ನ ಗಾಯವನ್ನು ನಿನಗೆ ಕಟ್ಟುವ ಹಾಗೆ ವಾಸಿಮಾಡುವ ಔಷಧಗಳು ನಿನಗೆ ಇಲ್ಲ.</verse>
				<verse number="14">ನಿನ್ನ ಮಿತ್ರರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವುದಿಲ್ಲ. ನಿನ್ನ ಅಕ್ರಮಗಳು ಬಹಳವೂ, ನಿನ್ನ ಪಾಪಗಳು ಪ್ರಬಲವೂ ಆಗಿರುವುದರಿಂದ ಶತ್ರುವಿನ ಗಾಯದಿಂದಲೂ, ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ;</verse>
				<verse number="15">ನಿನ್ನ ಗಾಯದ ನೋವಿನ ನಿಮಿತ್ತ ಏಕೆ ಕೂಗುತ್ತೀ? ನಿನ್ನ ದುಃಖವು ಗುಣವಾಗದಂಥಾದ್ದೇ. ನಿನ್ನ ಅಕ್ರಮ ಬಹಳವಾಗಿರುವುದರಿಂದಲೂ, ನಿನ್ನ ಪಾಪಗಳು ಪ್ರಬಲವಾಗಿರುವುದರಿಂದಲೂ ಇವುಗಳನ್ನು ನಿನಗೆ ಮಾಡಿದ್ದೇನೆ.</verse>
				<verse number="16">“ ‘ಆದರೂ ನಿನ್ನನ್ನು ನುಂಗಿಬಿಡುವವರನ್ನು ನುಂಗಿಬಿಡಲಾಗುವುದು. ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಹೋಗುವನು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು. ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು.</verse>
				<verse number="17">ಚೀಯೋನು ಬೇಡವಾದದ್ದು, ಅದನ್ನು ನೋಡಿಕೊಳ್ಳುವವರು ಯಾರೂ ಇಲ್ಲ, ಎಂದು ಅವರು ನಿನ್ನ ವಿಷಯ ಹೇಳುವುದನ್ನು ನಾನು ಸಹಿಸಲಾರದೆ, ನಿನಗೆ ಕ್ಷೇಮವನ್ನುಂಟು ಮಾಡಿ, ನಿನ್ನ ಗಾಯಗಳನ್ನು ಸ್ವಸ್ಥ ಮಾಡುವೆನು,’ ಎಂಬುದಾಗಿ ಯೆಹೋವ ದೇವರು ಹೇಳುತ್ತಾರೆ.</verse>
				<verse number="18">“ಯೆಹೋವ ದೇವರು ಮತ್ತೆ ಹೀಗೆ ಹೇಳಿದ್ದು, “ ‘ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ. ಅವನ ನಿವಾಸಗಳನ್ನು ಕರುಣಿಸುತ್ತೇನೆ. ಪಟ್ಟಣವು ಅದರ ದಿನ್ನೆಯ ಮೇಲೆ ಕಟ್ಟಲಾಗುವುದು. ಅರಮನೆಯು ತಕ್ಕ ಸ್ಥಳದಲ್ಲಿ ನೆಲೆಯಾಗಿರುವುದು.</verse>
				<verse number="19">ಅವುಗಳೊಳಗಿಂದ ಕೃತಜ್ಞತಾಸ್ತುತಿಯೂ, ಹರ್ಷಧ್ವನಿಯೂ ಹೊರಡುವುದು. ಅವರನ್ನು ಹೆಚ್ಚು ಮಾಡುವೆನು. ಅವರು ಕೊಂಚವಾಗಿರರು, ಅವರನ್ನು ಘನಪಡಿಸುವೆನು. ಮತ್ತು ಅವರು ತಿರಸ್ಕಾರಕ್ಕೆ ಒಳಗಾಗುವುದಿಲ್ಲ.</verse>
				<verse number="20">ಅವರ ಮಕ್ಕಳು ಸಹ ಪೂರ್ವಕಾಲದ ಹಾಗೆ ಇರುವರು. ಅವರ ಸಭೆಯು ನನ್ನ ಮುಂದೆ ಸ್ಥಾಪಿತವಾಗುವುದು. ಅವರನ್ನು ಬಾಧಿಸುವವರೆಲ್ಲರನ್ನು ಶಿಕ್ಷಿಸುವೆನು.</verse>
				<verse number="21">ಅವರ ಪ್ರಮುಖನು ಅವರೊಳಗೆ ಇರುವರು. ಅವರನ್ನು ಆಳುವವನು ಅವರ ಮಧ್ಯದಲ್ಲಿಂದ ಹೊರಡುವನು. ನಾನು ಅವನನ್ನು ಹತ್ತಿರ ಬರಮಾಡುವೆನು. ಅವನು ನನಗೆ ಸಮೀಪಿಸುವನು. ಆದರೆ ನನಗೆ ಸಮೀಪಿಸುವುದಕ್ಕೆ ತನ್ನ ಹೃದಯ ನಿಶ್ಚಯಮಾಡಿಕೊಂಡ ಇವನ್ಯಾರು,’ ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="22">‘ನೀವು ನನಗೆ ಪ್ರಜೆಯಾಗಿರುವಿರಿ. ನಾನು ನಿಮಗೆ ದೇವರಾಗಿರುವೆನು.’ ”</verse>
				<verse number="23">ಇಗೋ, ಯೆಹೋವ ದೇವರ ಬಿರುಗಾಳಿ ರೌದ್ರವಾಗಿ ಹೊರಡುತ್ತದೆ. ಅದು ಬಡಿದುಕೊಂಡು ಹೋಗುವ ಬಿರುಗಾಳಿಯೇ. ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವುದು.</verse>
				<verse number="24">ಯೆಹೋವ ದೇವರು ತಮ್ಮ ಹೃದಯಾಲೋಚನೆಯನ್ನು ನಡಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು; ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ.</verse>
			</chapter>
			<chapter number="31">
				<verse number="1">“ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು,” ಎಂದು ಯೆಹೋವ ದೇವರು ಸಾರುತ್ತಾರೆ.</verse>
				<verse number="2">ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ಅವರಿಗೆ ವಿಶ್ರಾಂತಿ ಕೊಡುವುದಕ್ಕೆ ಹೋಗಲಾಗಿ, ಖಡ್ಗಕ್ಕೆ ತಪ್ಪಿಸಿಕೊಂಡ ಇಸ್ರಾಯೇಲಿನ ಜನರಿಗೆ ಮರುಭೂಮಿಯಲ್ಲಿ ದಯೆ ದೊರಕಿತು.”</verse>
				<verse number="3">ಯೆಹೋವ ದೇವರು ಪೂರ್ವದಲ್ಲಿ ನನಗೆ ಕಾಣಿಸಿಕೊಂಡು, “ಹೌದು, ಶಾಶ್ವತ ಪ್ರೀತಿಯಿಂದ ನಿನ್ನನ್ನು ಪ್ರೀತಿಸಿದ್ದೇನೆ. ಕುಂದದ ದಯೆಯಿಂದಲೇ ನಿನ್ನನ್ನು ಸೆಳೆದುಕೊಂಡಿದ್ದೇನೆ.</verse>
				<verse number="4">ಇಸ್ರಾಯೇಲಿನ ಕನ್ಯೆಯೇ, ನಾನು ನಿನ್ನನ್ನು ಮತ್ತೆ ನಿರ್ಮಿಸುವೆನು. ನೀನು ಪುನಃ ನಿರ್ಮಿತವಾಗುವೆ. ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷ ಪಡುವವರ ನಾಟ್ಯದಲ್ಲಿ ಹೊರಡುವೆ.</verse>
				<verse number="5">ಸಮಾರ್ಯದ ಪರ್ವತಗಳಲ್ಲಿ ತಿರುಗಿ ದ್ರಾಕ್ಷಿಗಿಡಗಳನ್ನು ನೆಡುವೆ. ರೈತರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭವಿಸುವರು.</verse>
				<verse number="6">ಒಂದು ದಿನ ಬರುವದು, ಆಗ ಎಫ್ರಾಯೀಮನ ಪರ್ವತಗಳ ಮೇಲಿರುವ ಕಾವಲುಗಾರರು, ‘ಏಳಿರಿ, ಚೀಯೋನಿಗೆ, ನಮ್ಮ ಯೆಹೋವ ದೇವರ ಬಳಿಗೆ ಹೋಗೋಣ,’ ” ಎಂದು ಕೂಗುವರು.</verse>
				<verse number="7">ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಯಾಕೋಬನ ವಿಷಯ ಸಂತೋಷದಿಂದ ಹಾಡಿ, ಮೂಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ. ಸಾರಿರಿ. ಸ್ತುತಿಸಿರಿ. ‘ಯೆಹೋವ ದೇವರೇ, ನಿನ್ನ ಜನರನ್ನೂ, ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು,’ ಎಂದು ಹೇಳಿರಿ.</verse>
				<verse number="8">ಇಗೋ, ನಾನು ಅವರನ್ನು ಉತ್ತರ ದೇಶದಿಂದ ತಂದು ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ. ಅವರಲ್ಲಿ ಕುರುಡರೂ, ಕುಂಟರೂ, ಗರ್ಭಿಣಿಯಾದವರೂ, ದಿನತುಂಬಿದ ಗರ್ಭಿಣಿಯರೂ ಇರುವರು. ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗಿ ಬರುವರು.</verse>
				<verse number="9">ಅವರು ಅಳುತ್ತಾ ಬರುವರು. ಬಿನ್ನಹಗಳ ಸಂಗಡ ಅವರನ್ನು ನಡೆಸುವೆನು. ಅವು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು. ಏಕೆಂದರೆ ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ. ಎಫ್ರಾಯೀಮನು ನನ್ನ ಚೊಚ್ಚಲ ಮಗನೇ.</verse>
				<verse number="10">“ಜನಾಂಗಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ: ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ಸಾರಿರಿ! ‘ಇಸ್ರಾಯೇಲನ್ನು ಚದರಿಸಿದಾತನೇ ಅವರನ್ನು ಕೂಡಿಸಿ, ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವರನ್ನು ಕಾಯುವನು’ ಎಂದು ಪ್ರಕಟಿಸಿರಿ.</verse>
				<verse number="11">ಏಕೆಂದರೆ ಯೆಹೋವ ದೇವರು ಯಾಕೋಬ್ಯರನ್ನು ವಿಮೋಚಿಸಿದ್ದಾರೆ. ಅವರಿಗಿಂತ ಬಲಿಷ್ಠರ ಕೈಯೊಳಗಿಂದ ಅವರನ್ನು ಬಿಡಿಸಿದ್ದಾರೆ.</verse>
				<verse number="12">ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು; ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ, ಅಂತು ಯೆಹೋವ ದೇವರು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದಂತೆ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಮುಂದೆ ದುಃಖಪಡುವುದಿಲ್ಲ.</verse>
				<verse number="13">ಆಗ ಕನ್ನಿಕೆಯರೂ, ಪ್ರಾಯದವರೂ, ವೃದ್ಧರ ಸಹಿತವಾಗಿ ನಾಟ್ಯವಾಡುತ್ತಾ ಹರ್ಷಿಸುವರು. ಏಕೆಂದರೆ ನಾನು ಅವರ ದುಃಖವನ್ನು ಆನಂದಕ್ಕೆ ಬದಲಾಯಿಸುವೆನು. ನಾನು ಅವರನ್ನು ಆಧರಿಸಿ, ಅವರ ದುಃಖದಿಂದ ಬಿಡಿಸಿ, ಅವರಿಗೆ ಸಂತೋಷವನ್ನುಂಟು ಮಾಡುವೆನು.</verse>
				<verse number="14">ಇದಲ್ಲದೆ ಯಾಜಕರನ್ನು ಹೇರಳವಾಗಿ ತೃಪ್ತಿಗೊಳಿಸುವೆನು. ನನ್ನ ಜನರು ನನ್ನ ಒಳ್ಳೆಯತನದಿಂದ ತೃಪ್ತಿಪಡುವರು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="15">ಯೆಹೋವ ದೇವರು ಮತ್ತೆ ಹೀಗೆ ಹೇಳುತ್ತಾರೆ: “ರಾಮದಲ್ಲಿ ರೋದನೆಯೂ, ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಿಸುತ್ತಿದೆ. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ, ಆದರಣೆ ಹೊಂದದೆ ಹೋಗಿದ್ದಾಳೆ. ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ.”</verse>
				<verse number="16">ಯೆಹೋವ ದೇವರು ಇಂತೆನ್ನುತ್ತಾರೆ: “ನಿನ್ನ ಧ್ವನಿಯು ಗೋಳಾಡದಿರಲಿ; ನಿನ್ನ ಕಣ್ಣು ನೀರು ಸುರಿಸದಿರಲಿ; ನಿನ್ನ ಪ್ರಯಾಸವು ಸಾರ್ಥಕವಾಗುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿನ್ನ ಮಕ್ಕಳು ಶತ್ರುವಿನ ದೇಶದಿಂದ ಹಿಂದಿರುಗುವರು.</verse>
				<verse number="17">ನಿನ್ನ ಭವಿಷ್ಯದಲ್ಲಿ ನಿರೀಕ್ಷೆಯಿದೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಿನ್ನ ಮಕ್ಕಳು ತಮ್ಮ ಸ್ವಂತ ದೇಶಕ್ಕೆ ತಿರುಗಿ ಬರುವರು.”</verse>
				<verse number="18">“ಎಫ್ರಾಯೀಮನು ಅಂಗಲಾಚುವುದನ್ನು ನಿಶ್ಚಯವಾಗಿ ಕೇಳಿದೆನು. ಹೇಗೆಂದರೆ, ‘ನೀನು ನನ್ನನ್ನು ಶಿಕ್ಷಿಸಿದೆ. ಪಳಗದ ಹೋರಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು. ನನ್ನನ್ನು ತಿರುಗಿಸು, ಆಗ ತಿರುಗಿಕೊಳ್ಳುವೆನು. ಯೆಹೋವ ದೇವರೇ, ನೀವೇ ನನ್ನ ದೇವರಾಗಿದ್ದೀರಿ.</verse>
				<verse number="19">ನಾನು ನಿಮ್ಮಿಂದ ದೂರವಾದ ಮೇಲೆಯೇ ಪಶ್ಚಾತ್ತಾಪ ಪಟ್ಟೆನು; ತಿಳುವಳಿಕೆ ಹೊಂದಿದ ಮೇಲೆಯೇ ದುಃಖದಿಂದ ನನ್ನ ಎದೆಯನ್ನು ಬಡಿದುಕೊಂಡೆನು. ನನ್ನ ಯೌವನದ ಅವಮಾನವನ್ನು ನನ್ನ ಮೇಲೆ ಹೊತ್ತುಕೊಂಡ ಕಾರಣ ನಾನು ಲಜ್ಜೆಗೊಂಡೆನು, ಹೌದು, ತುಂಬಾ ನಾಚಿಕೆಪಟ್ಟೆನು.’</verse>
				<verse number="20">ಯೆಹೋವ ದೇವರು ಮುಂದುವರೆಸಿ, ‘ಎಫ್ರಾಯೀಮನು ನನಗೆ ಪ್ರಿಯ ಪುತ್ರನಲ್ಲವೇ? ಅವನು ನನಗೆ ಹರ್ಷಗೊಂಡಿರುವ ನನ್ನ ಮಗುವಲ್ಲವೋ? ನಾನು ಅವನಿಗೆ ವಿರೋಧವಾಗಿ ಆಗಾಗ ಮಾತಾಡಿದ್ದರೂ, ಅವನನ್ನು ಇನ್ನು ಬಹಳವಾಗಿ ಜ್ಞಾಪಕ ಮಾಡುತ್ತೇನೆ. ಆದ್ದರಿಂದ ಅವನಿಗೋಸ್ಕರ ನನ್ನ ಹೃದಯ ಮರುಗುತ್ತದಲ್ಲಾ ಅವನನ್ನು ಕನಿಕರಿಸುವೆನು,’ ” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="21">“ನಿನಗೋಸ್ಕರ ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ ಹೆದ್ದಾರಿಯ ಕಡೆಗೆ ನೀನು ಹೋದ ದಾರಿಗೂ ನಿನ್ನ ಹೃದಯವನ್ನು ಇಟ್ಟುಕೋ. ಇಸ್ರಾಯೇಲಿನ ಕನ್ಯಾ ಸ್ತ್ರೀಯೇ, ತಿರುಗಿಕೋ, ಈ ಪಟ್ಟಣಗಳಿಗೆ ತಿರುಗು.</verse>
				<verse number="22">ವಿಶ್ವಾಸದ್ರೋಹಿ ಇಸ್ರಾಯೇಲ್ ಮಗಳೇ ಎಷ್ಟರವರೆಗೆ ಅಡ್ಡಾಡುವೆ? ಏಕೆಂದರೆ ಯೆಹೋವ ದೇವರು ಭೂಮಿಯಲ್ಲಿ ಹೊಸದನ್ನು ಸೃಷ್ಟಿಸುತ್ತಾರೆ. ಹೆಂಗಸು ಗಂಡಸನ್ನು ಕಾಪಾಡುವಳು.”</verse>
				<verse number="23">ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರ ಸೆರೆಯನ್ನು ತಿರುಗಿ ತರುವಾಗ, ‘ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,’ ಎಂದು ಇನ್ನೂ ಹೇಳುವರು.</verse>
				<verse number="24">ಯೆಹೂದದಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿಯೂ ಬೇಸಾಯ ಮಾಡುವವರೂ, ಮಂದೆಯ ಸಂಗಡ ಹೊರಡುವವರೂ ವಾಸವಾಗುವರು.</verse>
				<verse number="25">ದಣಿದ ಪ್ರಾಣವನ್ನು ತೃಪ್ತಿಪಡಿಸಿದ್ದೇನೆ. ಕುಂದಿದ ಪ್ರಾಣಗಳನ್ನೆಲ್ಲಾ ತುಂಬಿಸಿದ್ದೇನೆ.”</verse>
				<verse number="26">ಅಷ್ಟರಲ್ಲಿ ಎಚ್ಚೆತ್ತು ನೋಡಿದೆನು. ನನ್ನ ನಿದ್ದೆ ನನಗೆ ಮಧುರವಾಗಿತ್ತು.</verse>
				<verse number="27">ಯೆಹೋವ ದೇವರು ಹೇಳುವುದೇನೆಂದರೆ, “ದಿನಗಳು ಬರುತ್ತವೆ. ಆಗ ನಾನು ಇಸ್ರಾಯೇಲ್ ಮತ್ತು ಯೆಹೂದ ರಾಜ್ಯಗಳಲ್ಲಿ ಮನುಷ್ಯರನ್ನೂ ಪ್ರಾಣಿಗಳನ್ನೂ ಬಿತ್ತಿ ಭರ್ತಿಮಾಡುವೆನು.</verse>
				<verse number="28">ನಾನು ಅವರನ್ನು ಕೀಳಲು, ಕೆಡವಲು, ಅಳಿಸಲು ಹಾಳುಮಾಡಲು, ಎಚ್ಚರವಹಿಸಿದ ಹಾಗೆಯೇ ಇನ್ನು ಮುಂದೆ ಅವರನ್ನು ಕಟ್ಟುವುದಕ್ಕೂ, ನೆಡುವುದಕ್ಕೂ ಅವರ ವಿಷಯವಾಗಿ ಎಚ್ಚರವಹಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="29">“ಆ ದಿನಗಳಲ್ಲಿ, “ ‘ತಂದೆಗಳು ಹುಳಿ ದ್ರಾಕ್ಷಿಯನ್ನು ತಿಂದದ್ದರಿಂದ, ಮಕ್ಕಳ ಹಲ್ಲುಗಳು ಚಳಿತು ಹೋದವೆಂದು ಇನ್ನು ಹೇಳುವುದಿಲ್ಲ.’</verse>
				<verse number="30">ಆದರೆ ಒಬ್ಬೊಬ್ಬನು ಸ್ವಂತ ಪಾಪಕ್ಕಾಗಿ ಸಾಯುವನು. ಹುಳಿ ದ್ರಾಕ್ಷಿಯನ್ನು ತಿಂದ ಮನುಷ್ಯನು ಯಾವನೋ, ಅವನ ಹಲ್ಲುಗಳು ಚಳಿತು ಹೋಗುವುವು.”</verse>
				<verse number="31">ಯೆಹೋವ ದೇವರು ಹೇಳುವುದನ್ನು ಕೇಳಿ: “ನಾನು ಇಸ್ರಾಯೇಲ್ ವಂಶದವರೊಂದಿಗೂ, ಯೆಹೂದ ವಂಶದವರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.</verse>
				<verse number="32">ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು ಈಜಿಪ್ಟ್ ದೇಶದಿಂದ ಕರೆದು ತಂದಾಗ, ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ, ಆ ನನ್ನ ಒಡಂಬಡಿಕೆಯನ್ನು ಅವರು ಮೀರಿ ನಡೆದರು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="33">“ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು,” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ನಿಯಮವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.</verse>
				<verse number="34">ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ, ‘ಯೆಹೋವ ದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ. ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ.”</verse>
				<verse number="35">ಇದು ಯೆಹೋವ ದೇವರಾದ ನನ್ನ ನುಡಿ, ಯೆಹೋವ ದೇವರು, ಹಗಲಲ್ಲಿ ಬೆಳಕು ನೀಡಲು ಸೂರ್ಯನನ್ನು ನೇಮಿಸಿದವರು. ಇರುಳಲ್ಲಿ ಬೆಳಕು ನೀಡಲು ಚಂದ್ರ ನಕ್ಷತ್ರಗಳನ್ನು ಏರ್ಪಡಿಸಿದವರು. ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ಕೆರಳಿಸುವವರು, ಸೇನಾಧೀಶ್ವರ ಯೆಹೋವ ದೇವರು ಎಂಬ ನಾಮಧೇಯದಿಂದ ಪ್ರಸಿದ್ಧರು.</verse>
				<verse number="36">“ಈ ನಿಯಮಗಳು ನನ್ನ ಸನ್ನಿಧಿಯಿಂದ ಯಾವಾಗ ಇಲ್ಲದೆ ಹೋಗುವುವೋ, ಆಗ ಇಸ್ರಾಯೇಲಿನ ಸಂತಾನವು ಸಹ ಸದಾಕಾಲ ನನ್ನ ಮುಂದೆ ಜನಾಂಗವಾಗಿರದ ಹಾಗೆ ನಿಂತುಹೋಗುವುದು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="37">ಹಾಗೆಯೇ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮೇಲಿನ ಆಕಾಶಮಂಡಲವನ್ನು ಅಳೆಯಬಹುದಾದರೆ, ಕೆಳಗಿನ ಭೂಮಂಡಲದ ವಿಸ್ತಾರವನ್ನು ಪರೀಕ್ಷಿಸಬಹುದಾದರೆ, ಆಗ ಮಾತ್ರ ಅದರ ದುಷ್ಕೃತ್ಯಗಳನ್ನು ಮುನ್ನಿಟ್ಟು, ಇಸ್ರಾಯೇಲ್ ವಂಶವನ್ನು ನಾನು ನಿರಾಕರಿಸಿ ಬಿಡಲು ಸಾಧ್ಯ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="38">ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ಹನನೇಲನ ಬುರುಜು ಮೊದಲುಗೊಂಡು ಮೂಲೆಯ ಬಾಗಿಲಿನವರೆಗೂ ಪಟ್ಟಣವು ಕರ್ತರಿಗೆ ಕಟ್ಟಲಾಗುವ ದಿನಗಳು ಬರಲಿದೆ.</verse>
				<verse number="39">ಅಳತೆ ದಾರವು ಅದಕ್ಕೆ ಎದುರಾಗಿ ಗಾರೇಬಿನ ಗುಡ್ಡದ ಮೇಲೆ ನೇರವಾಗಿ ಹೊರಟು, ಗೋಯದವರೆಗೂ ಆವರಿಸಿಕೊಳ್ಳುವುದು.</verse>
				<verse number="40">ಹೆಣ ಹೂಣುವ ಮತ್ತು ಬೂದಿ ತುಂಬುವ ಕಣಿವೆಯಿಂದ, ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ, ಇವುಗಳವರೆಗಿರುವ ಪ್ರದೇಶವೆಲ್ಲವೂ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಈ ಪಟ್ಟಣವು ಇನ್ನೆಂದಿಗೂ ನಿರ್ಮೂಲವಾಗದು, ನಾಶವಾಗದು.”</verse>
			</chapter>
			<chapter number="32">
				<verse number="1">ನೆಬೂಕದ್ನೆಚ್ಚರನ ಹದಿನೆಂಟನೆಯ ವರ್ಷವಾಗಿದ್ದ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೆಯ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವು.</verse>
				<verse number="2">ಆಗ ಬಾಬಿಲೋನಿನ ಅರಸನ ಸೈನ್ಯವು ಯೆರೂಸಲೇಮಿಗೆ ಮುತ್ತಿಗೆ ಹಾಕಿತ್ತು. ಪ್ರವಾದಿಯಾದ ಯೆರೆಮೀಯನು ಯೆಹೂದದ ಅರಸನ ಅರಮನೆಯಲ್ಲಿರುವ ಸೆರೆಮನೆಯ ಅಂಗಳದಲ್ಲಿ ಬಂಧಿಸಲಾಗಿದ್ದನು.</verse>
				<verse number="3">ಯೆಹೂದದ ಅರಸ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಯೆಹೋವ ದೇವರೇ ಹೀಗೆಂದಿದ್ದಾರೆ: ನಾನು ಈ ನಗರವನ್ನು ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಸುವೆನು. ಅವನು ಇದನ್ನು ವಶಪಡಿಸಿಕೊಳ್ಳುವನು.</verse>
				<verse number="4">ಈ ಯೆಹೂದದ ಅರಸ ಚಿದ್ಕೀಯನು ಬಾಬಿಲೋನಿಯರ ಕೈಯಿಂದ ತಪ್ಪಿಸಿಕೊಳ್ಳಲಾಗದೆ, ಅದರ ಅರಸನ ವಶವಾಗುವುದು ಖಂಡಿತ. ಅವನ ಮುಂದೆ ಸಾಕ್ಷಾತ್ತಾಗಿ ನಿಂತು ಮುಖಾಮುಖಿಯಾಗಿ ಮಾತನಾಡುವನು.</verse>
				<verse number="5">ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ಕೊಂಡು ಒಯ್ಯುವನು. ನಾನು ಅವನಿಗೆ ದಯೆತೋರಿಸುವವರೆಗೂ ಅವನು ಅಲ್ಲಿಯೇ ಇರುವನು. ನೀವು ಬಾಬಿಲೋನಿಯರೊಡನೆ ಯುದ್ಧಮಾಡಿದರೂ ಜಯವಾಗದು. ಇದು ಯೆಹೋವ ದೇವರ ನುಡಿ,’ ಎಂದು ಹೇಳುತ್ತಿರುವೆ, ಏಕೆ?” ಎಂದು ಆಪಾದಿಸಿ ಸೆರೆಯಲ್ಲಿ ಇಟ್ಟಿದ್ದನು.</verse>
				<verse number="6">ಆಗ ಯೆರೆಮೀಯನು ತಿಳಿಸಿದ್ದು, “ಯೆಹೋವ ದೇವರ ವಾಕ್ಯವು ನನಗೆ ಬಂತು,</verse>
				<verse number="7">ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾದ ಹನಮೇಲನು ನಿನ್ನ ಬಳಿಗೆ ಬಂದು, ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಏಕೆಂದರೆ ಅದನ್ನು ಕೊಂಡುಕೊಳ್ಳುವ ಹಾಗೆ ವಿಮೋಚಿಸುವ ಅಧಿಕಾರ ನಿನಗುಂಟು,’ ಎಂದು ಹೇಳುವನು.</verse>
				<verse number="8">“ಹಾಗೆಯೇ ನನ್ನ ಚಿಕ್ಕಪ್ಪನ ಮಗನಾದ ಹನಮೇಲನು, ಯೆಹೋವ ದೇವರ ವಾಕ್ಯದ ಪ್ರಕಾರ ನನ್ನ ಬಳಿಗೆ ಸೆರೆಮನೆಯ ಅಂಗಳಕ್ಕೆ ಬಂದು, ‘ಬೆನ್ಯಾಮೀನಿನ ದೇಶದಲ್ಲಿರುವ ಅನಾತೋತಿನಲ್ಲಿರುವ ನನ್ನ ಹೊಲವನ್ನು ನಿನಗೋಸ್ಕರ ಕೊಂಡುಕೋ. ಏಕೆಂದರೆ ಬಾಧ್ಯದ ಅಧಿಕಾರವೂ ನಿನ್ನದು; ವಿಮೋಚನೆಯೂ ನಿನ್ನದು; ಅದನ್ನು ನಿನಗೋಸ್ಕರ ಕೊಂಡುಕೋ,’ ಎಂದು ಬೇಡಿಕೊಂಡು ಹೇಳಿದನು. “ಆಗ ಅದು ಯೆಹೋವ ದೇವರ ವಾಕ್ಯವೆಂದು ನಾನು ತಿಳಿದುಕೊಂಡೆನು.</verse>
				<verse number="9">ಹಾಗೆ ನಾನು ನನ್ನ ಚಿಕ್ಕಪ್ಪನ ಮಗನಾದ ಹನಮೇಲನಿಂದ ಅನಾತೋತಿನಲ್ಲಿದ್ದ ಹೊಲವನ್ನು ಕೊಂಡುಕೊಂಡು, ಅವನಿಗೆ ಹದಿನೇಳು ಬೆಳ್ಳಿನಾಣ್ಯ ತೂಕಮಾಡಿ ಕ್ರಯಕೊಟ್ಟೆನು.</verse>
				<verse number="10">ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆಹಾಕಿ, ಸಾಕ್ಷಿಗಳನ್ನಿಟ್ಟು, ಬೆಳ್ಳಿಯನ್ನು ತ್ರಾಸಿನಲ್ಲಿ ತೂಕಮಾಡಿದೆನು.</verse>
				<verse number="11">ಮೇಲೆ ನಾನು ಕ್ರಯಪತ್ರವನ್ನು, ಅಂದರೆ ಚಕ್ಕು ಬಂದಿ ಷರತ್ತುಗಳಿಂದ ಕೂಡಿ ಮುದ್ರಿತವಾದ ಪತ್ರವನ್ನೂ, ಮುಚ್ಚಿದ್ದ ಪತ್ರವನ್ನೂ ತೆಗೆದುಕೊಂಡು,</verse>
				<verse number="12">ಮಹ್ಸೇಯನ ಮೊಮ್ಮಗನೂ, ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆ. ನನ್ನ ಚಿಕ್ಕಪ್ಪನ ಮಗ ಹನಮೇಲನ ಮುಂದೆ ಕ್ರಯಪತ್ರಕ್ಕೆ ರುಜುಮಾಡಿದ ಸಾಕ್ಷಿಗಳ ಸಮಕ್ಷಮದಲ್ಲಿ ಕಾರಾಗೃಹದ ಅಂಗಳದಲ್ಲಿ ಕುಳಿತಿದ್ದ ಎಲ್ಲ ಯೆಹೂದ್ಯರ ಎದುರಿನಲ್ಲಿ ಈ ಕ್ರಯಪತ್ರವನ್ನು ಕೊಟ್ಟೆ.</verse>
				<verse number="13">“ಅವರ ಮುಂದೆ ನಾನು ಬಾರೂಕನಿಗೆ ಅಪ್ಪಣೆ ಕೊಟ್ಟದ್ದೇನೆಂದರೆ:</verse>
				<verse number="14">‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ. ಈ ಪತ್ರಗಳನ್ನೂ, ಮುದ್ರೆ ಹಾಕಿದ ಈ ಕ್ರಯ ಪತ್ರವನ್ನೂ, ತೆರೆದಿರುವ ಈ ಪತ್ರವನ್ನೂ ತೆಗೆದು, ಅವು ಬಹು ದಿವಸವಿರುವ ಹಾಗೆ ಅವುಗಳನ್ನು ಒಂದು ಮಣ್ಣಿನ ಪಾತ್ರೆಯಲ್ಲಿ ಇಡು.</verse>
				<verse number="15">ಇಸ್ರಾಯೇಲಿನ ದೇವರೂ ಸರ್ವಶಕ್ತರೂ ಆದ ಯೆಹೋವ ದೇವರು ಈ ದೇಶದಲ್ಲಿ ತಿರುಗಿ ಮನೆಗಳೂ, ಹೊಲಗಳೂ, ದ್ರಾಕ್ಷಿಯ ತೋಟಗಳೂ ಸ್ವಾಧೀನವಾಗುವುವೆಂದು ಹೇಳುತ್ತಾರೆ.’</verse>
				<verse number="16">“ನಾನು ಆ ಕ್ರಯಪತ್ರವನ್ನು ನೇರೀಯನ ಮಗನಾದ ಬಾರೂಕನಿಗೆ ಕೊಟ್ಟ ಮೇಲೆ, ಯೆಹೋವ ದೇವರಿಗೆ ಪ್ರಾರ್ಥನೆ ಮಾಡಿದೆನು:</verse>
				<verse number="17">“ಸಾರ್ವಭೌಮ ಯೆಹೋವ ದೇವರೇ, ಇಗೋ, ನೀವು ನಿಮ್ಮ ಮಹಾ ಬಲದಿಂದಲೂ, ನಿಮ್ಮ ಚಾಚಿದ ಕೈಯಿಂದಲೂ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.</verse>
				<verse number="18">ನೀವು ಸಾವಿರಾರು ತಲೆಗಳವರೆಗೆ ಪ್ರೀತಿ, ದಯೆತೋರಿಸಿ, ತಂದೆಗಳ ಅಕ್ರಮಗಳನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸುರಿಸುವವರಾಗಿದ್ದೀರಿ. ಮಹತ್ವವುಳ್ಳವರೂ, ಪರಾಕ್ರಮವುಳ್ಳ ದೇವರೂ, ಸೇನಾಧೀಶ್ವರ ಯೆಹೋವ ದೇವರೂ ಎಂಬುದು ನಿಮ್ಮ ಹೆಸರು.</verse>
				<verse number="19">ನೀವು ನಿಮ್ಮ ಯೋಜನೆಯಲ್ಲಿ ದೊಡ್ಡವರು, ಕ್ರಿಯೆಯಲ್ಲಿ ಬಲಿಷ್ಠರು. ನಿಮ್ಮ ಕಣ್ಣುಗಳು ಮನುಷ್ಯರ ಎಲ್ಲಾ ಮಾರ್ಗಗಳ ಮೇಲೆ ಒಬ್ಬೊಬ್ಬನಿಗೆ ಅವನವನ ಮಾರ್ಗದ ಪ್ರಕಾರವಾಗಿಯೂ ಕೊಡುವ ಹಾಗೆ ತೆರೆದಿವೆ.</verse>
				<verse number="20">ನೀವು ಈ ದಿನದವರೆಗೂ ಈಜಿಪ್ಟ್ ದೇಶದಲ್ಲಿಯೂ ಇಸ್ರಾಯೇಲಿನಲ್ಲಿಯೂ ಜನಾಂಗಗಳೊಳಗೂ ಗುರುತುಗಳನ್ನೂ, ಲಕ್ಷಣಗಳನ್ನೂ ಇಟ್ಟಿದ್ದೀರಿ. ಇಂದಿನವರೆಗೂ ನಿಮಗೆ ಹೆಸರನ್ನು ಸ್ಥಿರಪಡಿಸಿಕೊಂಡಿದ್ದೀರಿ.</verse>
				<verse number="21">ನಿಮ್ಮ ಜನರಾದ ಇಸ್ರಾಯೇಲನ್ನು ಗುರುತುಗಳಿಂದಲೂ, ಲಕ್ಷಣಗಳಿಂದಲೂ, ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಮಹಾಭಯದಿಂದಲೂ ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದಿದ್ದೀರಿ.</verse>
				<verse number="22">ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀರಿ.</verse>
				<verse number="23">ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು. ಆದರೆ ಅವರು ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ನಿಯಮದಲ್ಲಿ ನಡೆದುಕೊಳ್ಳಲಿಲ್ಲ. ಮಾಡಬೇಕೆಂದು ನೀವು ಅವರಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಲಿಲ್ಲ. ಆದ್ದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀರಿ.</verse>
				<verse number="24">“ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ. ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರ ಕೈಯಲ್ಲಿ ಖಡ್ಗ, ಕ್ಷಾಮ, ವ್ಯಾಧಿಗಳ ಮೂಲಕವಾಗಿ ಒಪ್ಪಿಸಲಾಗಿದೆ. ನೀನು ಹೇಳಿದ್ದು ಉಂಟಾಯಿತು. ಇಗೋ, ನೀನು ಅದನ್ನು ನೋಡುತ್ತೀ.</verse>
				<verse number="25">ಆದರೂ ಓ ಸಾರ್ವಭೌಮ ಯೆಹೋವ ದೇವರೇ, ನೀನು ನನಗೆ, ‘ಹೊಲವನ್ನು ಹಣಕ್ಕೆ ಕೊಂಡುಕೋ, ಸಾಕ್ಷಿಗಳನ್ನು ಇಡು,’ ಎಂದು ಹೇಳಿದ್ದೀ. ಆದರೂ ಪಟ್ಟಣವು ಬಾಬಿಲೋನಿಯರ ಕೈಯಲ್ಲಿ ಒಪ್ಪಿಸಲಾಗಿದೆಯಲ್ಲಾ?”</verse>
				<verse number="26">ಆಗ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಉಂಟಾಗಿ,</verse>
				<verse number="27">“ಇಗೋ, ನಾನೇ ಯೆಹೋವ ದೇವರು, ಸಮಸ್ತ ಜನರ ದೇವರು, ನನಗೆ ಯಾವುದಾದರೂ ಅಸಾಧ್ಯವಾದ ಕಾರ್ಯ ಉಂಟೋ?</verse>
				<verse number="28">ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಈ ಪಟ್ಟಣವನ್ನು ಬಾಬಿಲೋನಿಯರ ಕೈಯಲ್ಲಿಯೂ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಒಪ್ಪಿಸುತ್ತೇನೆ. ಅವನು ಅದನ್ನು ವಶಪಡಿಸಿಕೊಳ್ಳುವನು.</verse>
				<verse number="29">ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರು ಬಂದು, ಈ ಪಟ್ಟಣಕ್ಕೆ ಬೆಂಕಿ ಹಚ್ಚಿ; ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವನ್ನರ್ಪಿಸಿ, ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ, ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯ್ದಿದ್ದಾರೋ ಅವುಗಳನ್ನೂ ಸುಟ್ಟುಬಿಡುವರು.</verse>
				<verse number="30">“ಏಕೆಂದರೆ ಇಸ್ರಾಯೇಲರೂ, ಯೆಹೂದದ ಮಕ್ಕಳೂ ತಮ್ಮ ಚಿಕ್ಕಂದಿನಿಂದ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾತ್ರ ಮಾಡಿದ್ದಾರೆ. ಇಸ್ರಾಯೇಲರೂ ತಮ್ಮ ಕೈಕೆಲಸಗಳಿಂದ ನನಗೆ ಕೋಪೋದ್ರೇಕವನ್ನೂ ಎಬ್ಬಿಸಿದ್ದಾರೆ, ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="31">ಈ ಪಟ್ಟಣವು ಕಟ್ಟಿದ ದಿನದಿಂದ ಈ ದಿನದವರೆಗೂ ನನ್ನ ಕೋಪಕ್ಕೂ, ನನ್ನ ಉಗ್ರಕ್ಕೂ ಗುರಿಯಾಗಿತ್ತು. ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.</verse>
				<verse number="32">ಇಸ್ರಾಯೇಲರೂ, ಯೆಹೂದದ ಮಕ್ಕಳೂ, ಅವರೂ, ಅವರ ಅರಸರೂ, ಅವರ ಪ್ರಧಾನರೂ, ಅವರ ಯಾಜಕರೂ, ಅವರ ಪ್ರವಾದಿಗಳೂ, ಯೆಹೂದದ ಜನರೂ, ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದರು</verse>
				<verse number="33">ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ. ಆದರೂ ನಾನು ಅವರಿಗೆ ಬೋಧಿಸಿದೆನು. ಪುನಃ ಬೋಧಿಸಿದೆನು. ಆದರೂ ಉಪದೇಶ ಹೊಂದುವುದಕ್ಕೆ ಅವರು ಕಿವಿಗೊಡಲಿಲ್ಲ ಅಥವಾ ಪ್ರತಿಕ್ರಿಯಿಸುವುದಿಲ್ಲ.</verse>
				<verse number="34">ಆದರೆ ನನ್ನ ಹೆಸರಿನಿಂದ ಕರೆಯಲಾಗಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟಿದ್ದಾರೆ.</verse>
				<verse number="35">ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗೆ ಆಹುತಿ ಕೊಡುವುದಕ್ಕಾಗಿ ಬೆನ್ ಹಿನ್ನೋಮ್ ತಗ್ಗಿನಲ್ಲಿ ಬಾಳ್ ದೇವತೆಗೆ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಹೀಗೆ ಯೆಹೂದ ಕುಲವನ್ನೇ ಪಾಪಕ್ಕೆ ಸಿಕ್ಕಿಸಿದ್ದಾರೆ. ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ. ಅದರ ಯೋಚನೆ ಕೂಡ ನನ್ನ ಮನಸ್ಸಿನಲ್ಲಿ ಸುಳಿಯಲಿಲ್ಲ.</verse>
				<verse number="36">“ ‘ಹೀಗಾದರೂ ಈಗ ಅದು ಖಡ್ಗದಿಂದಲೂ ಬರದಿಂದಲೂ ವ್ಯಾಧಿಯಿಂದಲೂ ಬಾಬಿಲೋನಿನ ಅರಸನ ಕೈವಶವಾಗಿದೆ,’ ಎಂದು ನೀವು ಹೇಳುವ ಈ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ:</verse>
				<verse number="37">ನಾನು ನನ್ನ ಕೋಪದಲ್ಲಿಯೂ, ನನ್ನ ಉಗ್ರದಲ್ಲಿಯೂ, ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶದೊಳಗಿಂದ ಅವರನ್ನು ಕೂಡಿಸಿ, ಈ ಸ್ಥಳಕ್ಕೆ ತಿರುಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.</verse>
				<verse number="38">ಅವರು ನನ್ನ ಜನರಾಗಿರುವರು. ನಾನು ಅವರಿಗೆ ದೇವರಾಗಿರುವೆನು.</verse>
				<verse number="39">ಅವರಿಗೂ, ಅವರ ತರುವಾಯ ಅವರ ಮಕ್ಕಳಿಗೂ ಹಿತವಾಗುವ ಹಾಗೆಯೂ; ಅವರು ಯಾವಾಗಲೂ ನನಗೆ ಭಯಪಡುವ ಹಾಗೆಯೂ ಅವರಿಗೆ ಒಂದೇ ಹೃದಯವನ್ನೂ, ಒಂದೇ ಮಾರ್ಗವನ್ನೂ ಕೊಡುವೆನು.</verse>
				<verse number="40">ಅವರಿಗೆ ಒಳ್ಳೆಯದನ್ನು ಮಾಡುವ ಹಾಗೆ ನಾನು ತಿರುಗಿಸಿಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ. ಅವರು ನನ್ನನ್ನು ಬಿಡದ ಹಾಗೆ ಭಯವನ್ನು ಅವರ ಹೃದಯದಲ್ಲಿ ಇಡುತ್ತೇನೆ.</verse>
				<verse number="41">ಹೌದು, ಅವರಿಗೆ ಒಳ್ಳೆಯದನ್ನು ಮಾಡುವುದಕ್ಕೆ ಅವರೊಂದಿಗೆ ಆನಂದಪಡುವೆನು. ನಿಜವಾಗಿ ನನ್ನ ಪೂರ್ಣಹೃದಯದಿಂದಲೂ, ನನ್ನ ಪೂರ್ಣಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.</verse>
				<verse number="42">“ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಹೇಗೆ ಈ ಜನರ ಮೇಲೆ ದೊಡ್ಡ ಕೇಡನ್ನು ಬರಮಾಡಿದೆನೋ, ಹಾಗೆಯೇ ನಾನು ವಾಗ್ದಾನ ಮಾಡಿದ ಸಮೃದ್ಧಿಯನ್ನೆಲ್ಲಾ ಅವರ ಮೇಲೆ ಬರಮಾಡುವೆನು.</verse>
				<verse number="43">‘ಜನಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ,’ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಳ್ಳುವರು, ಕೊಡುವರು.</verse>
				<verse number="44">ಬೆನ್ಯಾಮೀನನ ದೇಶದಲ್ಲಿಯೂ, ಯೆರೂಸಲೇಮಿನ ಪ್ರದೇಶಗಳಲ್ಲಿಯೂ, ಯೆಹೂದದ ಪಟ್ಟಣಗಳಲ್ಲಿಯೂ, ದಕ್ಷಿಣ ಪಟ್ಟಣಗಳಲ್ಲಿಯೂ ಹೊಲಗಳನ್ನು ಹಣಕ್ಕೆ ಕೊಂಡುಕೊಂಡು, ಪತ್ರಗಳನ್ನು ಬರೆದು ಮುದ್ರೆಹಾಕಿ, ಸಾಕ್ಷಿಗಳನ್ನು ಇಟ್ಟುಕೊಳ್ಳುವರು. ಏಕೆಂದರೆ ನಾನು ಅವರ ಸೆರೆಯಿಂದ ಹಿಂದಿರುಗುವಂತೆ ಮಾಡುವೆನು,” ಎಂದು ಯೆಹೋವ ದೇವರು ನುಡಿಯುತ್ತಾರೆ.</verse>
			</chapter>
			<chapter number="33">
				<verse number="1">ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಅವನು ಇನ್ನು ಸೆರೆಮನೆಯ ಅಂಗಳದಲ್ಲಿ ಸೆರೆಯಾಗಿದ್ದಾಗ ಎರಡನೆಯ ಸಾರಿ ಉಂಟಾಯಿತು.</verse>
				<verse number="2">“ಭೂಮಿಯನ್ನು ಸೃಷ್ಟಿಮಾಡುವ ಯೆಹೋವ ದೇವರೂ ಅದನ್ನು ಸ್ಥಾಪಿಸುವುದಕ್ಕಾಗಿ ಅದನ್ನು ರೂಪಿಸಿದ ಯೆಹೋವನೆಂಬ ಹೆಸರುಳ್ಳವನೂ ಹೇಳುವುದೇನೆಂದರೆ,</verse>
				<verse number="3">‘ನನ್ನನ್ನು ಕರೆ, ಆಗ ನಿನಗೆ ಉತ್ತರಕೊಡುವೆನು. ನಿನಗೆ ತಿಳಿಯದ ಮತ್ತು ಪರಿಶೋಧನೆಗೆ ಮೀರಿದ ಮಹಾಕಾರ್ಯಗಳನ್ನೂ ನಿನಗೆ ಹೇಳಿಕೊಡುವೆನು.’</verse>
				<verse number="4">ದಿಬ್ಬಗಳಿಂದಲೂ ಖಡ್ಗದಿಂದಲೂ ಕೆಡವಿರುವ ಈ ಪಟ್ಟಣದ ಮನೆಗಳ ವಿಷಯವಾಗಿವೂ ಯೆಹೂದದ ಅರಸರ ಅರಮನೆಗಳ ವಿಷಯವಾಗಿಯೂ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ.</verse>
				<verse number="5">ಅವರು ಕಸ್ದೀಯರ ಸಂಗಡ ಯುದ್ಧ ಮಾಡುವುದಕ್ಕೂ ನಾನು ನನ್ನ ಕೋಪದಲ್ಲಿಯೂ, ‘ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವುದಕ್ಕೂ ಬರುತ್ತಾರೆ. ಏಕೆಂದರೆ ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅವರ ಸಮಸ್ತ ದುಷ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.</verse>
				<verse number="6">“ ‘ಇಗೋ, ನಾನು ಅದಕ್ಕೆ ಕ್ಷೇಮವನ್ನೂ, ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಪಡಿಸಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.</verse>
				<verse number="7">ಯೆಹೂದದ ಸೆರೆಯನ್ನೂ, ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ, ಅವರನ್ನು ಮುಂಚಿನ ಹಾಗೆ ಕಟ್ಟುವೆನು.</verse>
				<verse number="8">ಅವರು ಯಾವುದರಿಂದ ನನಗೆ ವಿರೋಧವಾಗಿ ಪಾಪ ಮಾಡಿದರೋ, ಆ ಅಕ್ರಮದಿಂದೆಲ್ಲಾ ಅವರನ್ನು ಶುದ್ಧಮಾಡುವೆನು. ಅವರು ಯಾವವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದಾರೋ, ಆ ಅಕ್ರಮಗಳನ್ನೆಲ್ಲಾ ಮನ್ನಿಸುವೆನು.</verse>
				<verse number="9">ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖ ಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲಾ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.’</verse>
				<verse number="10">“ಯೆಹೋವ ದೇವರು ಹೇಳುವುದೇನೆಂದರೆ: ‘ “ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು,” ಎಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ</verse>
				<verse number="11">ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="12">“ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ‘ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿ ಕುರುಬರು ತಮ್ಮ ಹಿಂಡುಗಳಿಗೆ ವಿಶ್ರಾಂತಿ ನೀಡಲು ಮತ್ತೆ ಹುಲ್ಲುಗಾವಲುಗಳು ಇರುತ್ತವೆ.</verse>
				<verse number="13">ಬೆಟ್ಟದ ಪಟ್ಟಣಗಳಲ್ಲಿಯೂ ತಗ್ಗಿನ ಪಟ್ಟಣಗಳಲ್ಲಿಯೂ, ದಕ್ಷಿಣ ಪಟ್ಟಣಗಳಲ್ಲಿಯೂ, ಬೆನ್ಯಾಮೀನನ ದೇಶದಲ್ಲಿಯೂ, ಯೆರೂಸಲೇಮಿನ ಪ್ರದೇಶಗಳಲ್ಲಿಯೂ, ಯೆಹೂದದ ಪಟ್ಟಣಗಳಲ್ಲಿಯೂ ಇನ್ನು ಮೇಲೆ ಕುರಿಮಂದೆಗಳು ಎಣಿಸುವವನ ಕೈಕೆಳಗೆ ಹಾದುಹೋಗುವುದು,’ ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="14">“ ‘ಇಗೋ, ದಿನಗಳು ಬರಲಿವೆ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ಇಸ್ರಾಯೇಲಿನ ಮತ್ತು ಯೆಹೂದದ ಮನೆಯವರ ಸಂಗಡ ಹೇಳಿದ ಒಳ್ಳೆಯ ವಾಗ್ದಾನವನ್ನು ನೆರವೇರಿಸುವೆನು.</verse>
				<verse number="15">“ ‘ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು. ಆತನು ದೇಶದಲ್ಲಿ ನ್ಯಾಯವನ್ನೂ, ನೀತಿಯನ್ನೂ ನಡೆಸುವನು.</verse>
				<verse number="16">ಆಗ ಯೆಹೂದ್ಯರು ಸುರಕ್ಷಿತರಾಗಿರುವರು. ಯೆರೂಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಅಂದರೆ ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.’</verse>
				<verse number="17">ಯೆಹೋವ ದೇವರಾದ ನಾನು ಹೇಳುವುದೇನೆಂದರೆ: ‘ದಾವೀದನು ಎಂದಿಗೂ ಇಸ್ರಾಯೇಲ್ ಸಿಂಹಾಸನದಲ್ಲಿ ಕುಳಿತುಕೊಳ್ಳಲು ಒಬ್ಬ ವ್ಯಕ್ತಿಯನ್ನು ಹೊಂದಲು ವಿಫಲನಾಗುವುದಿಲ್ಲ</verse>
				<verse number="18">ಅದಕ್ಕೆ ಆ ಸಂತಾನದವರಲ್ಲಿ ಒಬ್ಬ ಗಂಡಸು ಇಲ್ಲದೆ ಇರನು. ಅಂತೆಯೇ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ದಹನಬಲಿಯನ್ನು, ನೈವೇದ್ಯವನ್ನು ಹಾಗು ಕಾಣಿಕೆಯನ್ನು ಒಪ್ಪಿಸತಕ್ಕ ಒಬ್ಬನು ಲೇವಿಯರಾದ ಯಾಜಕರು ಇದ್ದೇ ಇರುವನು.’ ”</verse>
				<verse number="19">ಯೆಹೋವ ದೇವರು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದರು:</verse>
				<verse number="20">“ಯೆಹೋವ ದೇವರಾದ ನನ್ನ ನುಡಿ ಇದು: ‘ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ, ಹಗಲನ್ನು ಮತ್ತು ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಲು ನಿಮ್ಮಿಂದಾದೀತೇ?</verse>
				<verse number="21">ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೆ ನನ್ನ ಪರಿಚಾರಕರಾದ ಲೇವಿ ಕುಲದ ಯಾಜಕರೊಂದಿಗೆ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು.</verse>
				<verse number="22">ಆದರೆ ನನ್ನ ದಾಸ ದಾವೀದನ ಸಂತಾನವನ್ನೂ ನನ್ನ ಪರಿಚಾರಕರಾದ ಲೇವಿಯರನ್ನೂ ಅಸಂಖ್ಯಾತ ನಕ್ಷತ್ರಗಣದಷ್ಟು ಮತ್ತು ಎಣಿಸಲಾಗದ ಸಮುದ್ರತೀರದ ಮರಳಿನಷ್ಟು ಅಧಿಕಗೊಳಿಸುವೆನು.’ ”</verse>
				<verse number="23">ಇದಲ್ಲದೆ ಯೆಹೋವ ದೇವರು ಯೆರೆಮೀಯನಿಗೆ ಈ ವಾಕ್ಯವನ್ನು ಅನುಗ್ರಹಿಸಿದರು:</verse>
				<verse number="24">“ ‘ಯೆಹೋವ ದೇವರಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ, ಎಂದು ಜನರು ಆಡಿಕೊಳ್ಳುತ್ತಿದ್ದಾರೆ.’ ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರಲ್ಲವೇ?</verse>
				<verse number="25">ಯೆಹೋವನಾದ ನಾನು ಹೇಳುವುದನ್ನು ಕೇಳು: ‘ಹಗಲಿರುಳೆಂಬ ಸ್ಥಿರವಾದ ನಿಬಂಧನೆಯನ್ನು ನಾನು ಮಾಡದೆ ಹೋಗಿದ್ದರೆ, ಭೂಮ್ಯಾಕಾಶಗಳಿಗೆ ನಿಯಮವನ್ನು ನಾನು ವಿಧಿಸದೆ ಹೋಗಿದ್ದರೆ,</verse>
				<verse number="26">ಆಗ ಮಾತ್ರ ನಾನು ಯಾಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ. ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ, ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.’ ”</verse>
			</chapter>
			<chapter number="34">
				<verse number="1">ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಅವನ ಆಡಳಿತದ ಭೂಮಿಯ ಎಲ್ಲಾ ರಾಜ್ಯಗಳೂ ಎಲ್ಲಾ ಜನಾಂಗಗಳೂ ಯೆರೂಸಲೇಮಿಗೂ ಅದರ ಎಲ್ಲಾ ಪಟ್ಟಣಗಳಿಗೂ ವಿರೋಧವಾಗಿ ಯುದ್ಧಮಾಡುವಾಗ ಯೆಹೋವ ದೇವರಿಂದ ಯೆರೆಮೀಯನಿಗೆ ಬಂದ ವಾಕ್ಯವೇನೆಂದರೆ:</verse>
				<verse number="2">“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಹೋಗಿ ಯೆಹೂದದ ಅರಸನಾದ ಚಿದ್ಕೀಯನ ಸಂಗಡ ಮಾತನಾಡಿ ಅವನಿಗೆ ಹೇಳತಕ್ಕದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈ ಪಟ್ಟಣವನ್ನು ಬಾಬಿಲೋನಿನ ಅರಸನ ಕೈಗೆ ಒಪ್ಪಿಸುವೆನು. ಅವನು ಅದನ್ನು ಬೆಂಕಿಯಿಂದ ಸುಡುವನು.</verse>
				<verse number="3">ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳುವುದಿಲ್ಲ. ಆದರೆ ನಿಶ್ಚಯವಾಗಿ ಹಿಡಿಯಲಾಗಿ, ಅವನ ಕೈವಶವಾಗುವೆ. ನೀವು ಬಾಬಿಲೋನಿನ ಅರಸನನ್ನು ಪ್ರತ್ಯಕ್ಷವಾಗಿ ಕಾಣುವಿರಿ. ಅವನು ನಿಮ್ಮೊಂದಿಗೆ ಮುಖಾಮುಖಿಯಾಗಿ ಮಾತನಾಡುವನು. ನೀನು ಬಾಬಿಲೋನಿಗೆ ಹೋಗುವಿ.</verse>
				<verse number="4">“ ‘ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವ ದೇವರ ವಾಗ್ದಾನವನ್ನು ಕೇಳು. ನಿನ್ನನ್ನು ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಖಡ್ಗದಿಂದ ಸಾಯುವುದಿಲ್ಲ.</verse>
				<verse number="5">ನೀನು ಶಾಂತಿಯುತವಾಗಿ ಸಾಯುವೆ. ನಿನಗಿಂತ ಮೊದಲು ಆಳಿದ ನಿನ್ನ ಪಿತೃಗಳಾದ ಅರಸರನ್ನು ಗೌರವಿಸಲು ಬೆಂಕಿಯನ್ನು ಹೊತ್ತಿಸಿದ ಪ್ರಕಾರ ನಿನಗೂ ಹಾಕುವರು. “ಅಯ್ಯೋ, ಒಡೆಯನೇ,” ಎಂದು ಹೇಳಿ ನಿನಗೋಸ್ಕರ ಗೋಳಾಡುವರು. ನಾನೇ ಈ ವಾಗ್ದಾನವನ್ನು ಮಾಡಿದ್ದೇನೆಂದು ಯೆಹೋವ ದೇವರು ಹೇಳುತ್ತಾರೆ.’ ”</verse>
				<verse number="6">ಆಗ ಪ್ರವಾದಿಯಾದ ಯೆರೆಮೀಯನು ಈ ವಾಕ್ಯಗಳನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದದ ಅರಸನಾದ ಚಿದ್ಕೀಯನಿಗೆ ಹೇಳಿದನು.</verse>
				<verse number="7">ಬಾಬಿಲೋನಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಎಂದರೆ, ಲಾಕೀಷಿಗೂ ಅಜೇಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿದನು. ಏಕೆಂದರೆ ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ಮಾತ್ರ ನಿಂತಿದ್ದವು.</verse>
				<verse number="8">ಗುಲಾಮರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಅರಸನಾದ ಚಿದ್ಕೀಯನು ಯೆರೂಸಲೇಮಿನ ಎಲ್ಲಾ ಜನರೊಂದಿಗೆ ಒಡಂಬಡಿಕೆಯನ್ನು ಮಾಡಿದ ನಂತರ ಯೆಹೋವ ದೇವರಿಂದ ಯೆರೆಮೀಯನಿಗೆ ಈ ಮಾತು ಬಂದಿತು.</verse>
				<verse number="9">ಪ್ರತಿಯೊಬ್ಬರೂ ತಮ್ಮ ಗಂಡು ಮತ್ತು ಹೆಣ್ಣು ಹಿಬ್ರಿಯ ಗುಲಾಮರನ್ನು ಇಬ್ಬರನ್ನೂ ಮುಕ್ತಗೊಳಿಸಬೇಕು. ಯೆಹೂದ್ಯರಾದ ಸಹೋದರ ಸಹೋದರಿಯರನ್ನು ಯಾರೂ ಬಂಧನದಲ್ಲಿ ಇಟ್ಟುಕೊಳ್ಳಲಿಲ್ಲ.</verse>
				<verse number="10">ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ತಮ್ಮ ದಾಸದಾಸಿಯರನ್ನು ಬಿಡುಗಡೆ ಮಾಡುವುದಾಗಿ ಒಪ್ಪಿಕೊಂಡರು. ಇನ್ನು ಮುಂದೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಳ್ಳುವುದಿಲ್ಲ ಎಂದು ಅವರು ಒಪ್ಪಿದರು ಮತ್ತು ಅವರನ್ನು ಬಿಡುಗಡೆ ಮಾಡಿದರು.</verse>
				<verse number="11">ಆದರೆ ನಂತರ ಅವರು ತಮ್ಮ ಮನಸ್ಸನ್ನು ಬದಲಾಯಿಸಿದರು ಮತ್ತು ಅವರು ಬಿಡುಗಡೆ ಮಾಡಿದ ಗುಲಾಮರನ್ನು ಮರಳಿ ತೆಗೆದುಕೊಂಡು ಅವರನ್ನು ಮತ್ತೆ ಗುಲಾಮರನ್ನಾಗಿ ಮಾಡಿದರು.</verse>
				<verse number="12">ಆದ್ದರಿಂದ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾಗಿ:</verse>
				<verse number="13">“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಮ್ಮ ಪಿತೃಗಳನ್ನು ಈಜಿಪ್ಟ್ ದೇಶದೊಳಗಿಂದ ದಾಸರ ದೇಶದೊಳಗಿಂದ ಹೊರಗೆ ತಂದ ದಿವಸದಲ್ಲಿ ಅವರ ಸಂಗಡ ಒಡಂಬಡಿಕೆ ಮಾಡಿ,</verse>
				<verse number="14">‘ಏಳು ವರ್ಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಜೀತದಾಳಾಗಿದ್ದ ತನ್ನ ಸಹೋದರನಾದ ಹಿಬ್ರಿಯನನ್ನು ಕಳುಹಿಸಬೇಕೆಂದೂ, ಅವನು ನಿನಗೆ ಆರು ವರ್ಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕು,’ ಎಂದು ಹೇಳಿದೆನು. ಆದರೆ ನಿಮ್ಮ ಪಿತೃಗಳು ನನ್ನ ಮಾತನ್ನು ಕೇಳಲಿಲ್ಲ. ಅವರು ಕಿವಿಗೊಡಲಿಲ್ಲ.</verse>
				<verse number="15">ನೀವೋ ಕೂಡಲೆ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ಬಿಡುಗಡೆಯನ್ನು ಪ್ರಕಟಿಸಿ, ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದಿರಿ. ನನ್ನ ಹೆಸರಿನಿಂದ ಖ್ಯಾತಗೊಂಡಿರುವ ದೇವಾಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಪ್ಪಂದ ಮಾಡಿಕೊಂಡಿರಿ.</verse>
				<verse number="16">ಆದರೆ ಆಮೇಲೆ ನಿಮ್ಮ ಮನಸ್ಸನ್ನು ಮಾರ್ಪಡಿಸಿಕೊಂಡಿರಿ. ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು, ಶೋಷಣೆಗೆ ಗುರಿಮಾಡಿ, ನನ್ನ ನಾಮಕ್ಕೆ ಅಪಕೀರ್ತಿ ತಂದಿದ್ದೀರಿ.</verse>
				<verse number="17">“ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಪ್ರತಿಯೊಬ್ಬನು ತನ್ನ ಸಹೋದರನಿಗೂ, ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವುದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಖಡ್ಗ, ಬರ, ವ್ಯಾಧಿ ಇವುಗಳಿಗಾಗಿಯೇ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಯೆಹೋವ ದೇವರು ಹೇಳುತ್ತಾರೆ ಮತ್ತು ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನೂ ತಿರಸ್ಕಾರ ಹೊಂದುವಂತೆ ಮಾಡುವೆನು.</verse>
				<verse number="18">ನನ್ನ ಒಡಂಬಡಿಕೆಯನ್ನು ಮೀರಿದ ಮನುಷ್ಯರನ್ನೂ, ಕರುವನ್ನೂ ಎರಡು ಭಾಗಮಾಡಿ, ಅದರ ತುಂಡುಗಳ ನಡುವೆ ದಾಟಿ ಹೋಗಿ, ನನ್ನ ಮುಂದೆ ಮಾಡಿದ ಒಡಂಬಡಿಕೆಯ ವಾಕ್ಯಗಳನ್ನು ಸ್ಥಾಪಿಸದೆ ಇರುವವರನ್ನೂ,</verse>
				<verse number="19">ಯೆಹೂದದ ಪ್ರಧಾನರನ್ನೂ, ಯೆರೂಸಲೇಮಿನ ಪ್ರಧಾನರನ್ನೂ, ಕಂಚುಕಿಯರನ್ನೂ, ಯಾಜಕರನ್ನೂ, ಕರುವಿನ ತುಂಡುಗಳ ನಡುವೆ ದಾಟಿಹೋದ ದೇಶದ ಜನರೆಲ್ಲರನ್ನೂ,</verse>
				<verse number="20">ಅವರ ಶತ್ರುಗಳ ಕೈಯಲ್ಲಿಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಒಪ್ಪಿಸುವೆನು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗುವುವು.</verse>
				<verse number="21">“ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ, ನಿಮ್ಮನ್ನು ಬಿಟ್ಟುಹೋಗಿರುವ ಬಾಬಿಲೋನಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.</verse>
				<verse number="22">ಯೆಹೋವ ದೇವರು ಹೇಳುತ್ತಾರೆ, ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರುಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ, ಅದನ್ನು ಹಿಡಿದು ಬೆಂಕಿಯಿಂದ ಸುಡುವರು ಮತ್ತು ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗಿ ಮಾಡುವೆನು.”</verse>
			</chapter>
			<chapter number="35">
				<verse number="1">ಯೋಷೀಯನ ಮಗನಾದ ಯೆಹೂದದ ಅರಸ ಯೆಹೋಯಾಕೀಮನ ಕಾಲದಲ್ಲಿ ಯೆರೆಮೀಯನಾದ ನನಗೆ ಯೆಹೋವ ದೇವರಿಂದ ಬಂದ ವಾಕ್ಯ ಇದು:</verse>
				<verse number="2">“ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು. ಅವರನ್ನು ಯೆಹೋವ ದೇವರ ಆಲಯದ ಒಂದು ಕೋಣೆಯೊಳಕ್ಕೆ ಕರೆದು, ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು.”</verse>
				<verse number="3">ಆಗ ನಾನು ಹಬಚ್ಚಿನ್ಯನ ಮಗ, ಯೆರೆಮೀಯನ ಮಗನಾದ, ಯಾಜನ್ಯನೂ, ಅವನ ಸಹೋದರರನ್ನೂ, ಅವನ ಪುತ್ರರೆಲ್ಲರನ್ನೂ ರೇಕಾಬನ ಸಮಸ್ತ ಮನೆಯವರನ್ನೂ ಕರೆಯುವುದಕ್ಕೆ ಹೋದೆನು.</verse>
				<verse number="4">ಕರೆದುಕೊಂಡು ಯೆಹೋವ ದೇವರ ಆಲಯಕ್ಕೆ ದ್ವಾರಪಾಲಕನಾದ ಶಲ್ಲೂಮನ ಮಗನಾದ ಮಾಸೇಯನ ಕೊಠಡಿಯ ಮೇಲಿರುವ ಪ್ರಧಾನರ ಕೊಠಡಿಯ ಬಳಿಯಲ್ಲಿರುವ ದೇವರ ಮನುಷ್ಯನಾದ ಇಗ್ದಲ್ಯನ ಮಗನಾದ ಹಾನಾನನ ಪುತ್ರರ ಕೊಠಡಿಗೆ ತಂದು,</verse>
				<verse number="5">ರೇಕಾಬನ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಹೂಜೆಗಳನ್ನೂ, ಪಂಚ ಪಾತ್ರೆಗಳನ್ನೂ ಇಟ್ಟು ಅವರಿಗೆ, “ದ್ರಾಕ್ಷಾರಸ ಕುಡಿಯಿರಿ,” ಎಂದನು.</verse>
				<verse number="6">ಆದರೆ ಅವರು, “ನಾವು ದ್ರಾಕ್ಷಾರಸ ಕುಡಿಯುವುದಿಲ್ಲ; ಏಕೆಂದರೆ ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ ಈ ಆಜ್ಞೆಯನ್ನು ಕೊಟ್ಟನು. ಅದು ಏನೆಂದರೆ ನೀವಾದರೂ, ನಿಮ್ಮ ಮಕ್ಕಳಾದರೂ ಎಂದೆಂದಿಗೂ ದ್ರಾಕ್ಷಾರಸವನ್ನು ಕುಡಿಯಬೇಡಿರಿ;</verse>
				<verse number="7">ಮನೆ ಕಟ್ಟಬೇಡಿರಿ, ಬೀಜವನ್ನು ಬಿತ್ತಬೇಡಿರಿ; ದ್ರಾಕ್ಷಿತೋಟವನ್ನು ನೆಡಬೇಡಿರಿ, ಅಂಥದ್ದು ನಿಮಗಿರಬಾರದು. ಆದರೆ ನೀವು ಪರಕೀಯರ ದೇಶದಲ್ಲಿ ನಿಮ್ಮ ದಿನಗಳು ಬಹಳವಾಗಿರುವ ಹಾಗೆ ನಿಮ್ಮ ದಿವಸಗಳಲ್ಲೆಲ್ಲಾ ಗುಡಾರಗಳಲ್ಲಿ ವಾಸಮಾಡಬೇಕು.</verse>
				<verse number="8">ಈ ಪ್ರಕಾರ ನಾವು ನಮ್ಮ ಪೂರ್ವಜನಾದ ರೇಕಾಬನ ಮಗ ಯೆಹೋನಾದಾಬನ ಮಾತನ್ನು, ಅವನು ನಮಗೆ ಆಜ್ಞಾಪಿಸಿದ್ದೆಲ್ಲದರಲ್ಲಿ ನಾವೂ, ನಮ್ಮ ಹೆಂಡತಿಯರೂ, ನಮ್ಮ ಪುತ್ರರೂ, ನಮ್ಮ ಪುತ್ರಿಯರೂ ನಮ್ಮ ದಿವಸಗಳಲ್ಲೆಲ್ಲಾ ದ್ರಾಕ್ಷಾರಸ ಕುಡಿಯದ ಹಾಗೆಯೂ,</verse>
				<verse number="9">ವಾಸಮಾಡುವುದಕ್ಕೆ ಮನೆಗಳನ್ನು ಕಟ್ಟದ ಹಾಗೆಯೂ ಇದ್ದೇವೆ. ನಮಗೆ ದ್ರಾಕ್ಷಿ ತೋಟಗಳೂ, ಹೊಲಗಳೂ, ಬೀಜವೂ ಇಲ್ಲ.</verse>
				<verse number="10">ಗುಡಾರಗಳಲ್ಲಿ ವಾಸಮಾಡುತ್ತೇವೆ. ನಮ್ಮ ಪೂರ್ವಜನಾದ ಯೋನಾದಾಬನು ನಮಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಕೇಳಿ ನಡೆದಿದ್ದೇವೆ.</verse>
				<verse number="11">ಆದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದೇಶದಲ್ಲಿ ಬಂದಾಗ, ‘ನಾವು ಬನ್ನಿ, ಕಸ್ದೀಯರ ದಂಡಿಗೂ, ಅರಾಮಿನ ದಂಡಿಗೂ ತಪ್ಪಿಸಿಕೊಂಡು, ಯೆರೂಸಲೇಮಿಗೆ ಹೋಗೋಣ,’ ಎಂದೆವು. ಹೀಗೆ ಯೆರೂಸಲೇಮಿನಲ್ಲಿಯೇ ಉಳಿದುಕೊಂಡಿದ್ದೇವೆ,” ಎಂದರು.</verse>
				<verse number="12">ಆದ್ದರಿಂದ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಉಂಟಾಗಿ,</verse>
				<verse number="13">“ಇಸ್ರಾಯೇಲರ ದೇವರೂ, ಸೇನಾಧೀಶ್ವರ ಯೆಹೋವ ದೇವರೂ ಆದ ನಾನು ಹೇಳುವುದು ಇದು: ನೀನು ಹೋಗಿ ಯೆಹೂದ್ಯರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಹೀಗೆಂದು ತಿಳಿಸು: ‘ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೇ?’ ಎಂದು ಯೆಹೋವ ದೇವರು ಕೇಳುತ್ತಾರೆ.</verse>
				<verse number="14">ರೇಕಾಬನ ಮಗ ಯೆಹೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.”</verse>
				<verse number="15">ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳುಹಿಸುತ್ತಾ ಬಂದೆ. “ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ, ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ವಾಸಿಸುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ.” ಆದರೆ ನೀವು ಕೇಳಲಿಲ್ಲ. ಕಿವಿಗೊಡಲೂ ಇಲ್ಲ.</verse>
				<verse number="16">ರೇಕಾಬನ ಮಗ ಯೆಹೋನಾದಾಬನ ಸಂತಾನದವರು ತಮ್ಮ ಪೂರ್ವಜನು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸಿದರು. ಆದರೆ ಈ ಜನರು ನನ್ನ ಮಾತನ್ನು ಕೇಳದೆ ಹೋದರು.</verse>
				<verse number="17">“ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರೂ, ಇಸ್ರಾಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ‘ಯೆಹೂದ್ಯರಿಗೂ, ಯೆರೂಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ, ಅವರು ಕೇಳಲಿಲ್ಲ; ಕೂಗಿದರೂ ಉತ್ತರ ಕೊಡಲಿಲ್ಲ.’ ”</verse>
				<verse number="18">ಯೆರೆಮೀಯನು ರೇಕಾಬ್ಯರಿಗೆ, “ಇಸ್ರಾಯೇಲರ ದೇವರೂ, ಸರ್ವಶಕ್ತರೂ ಆದ ಯೆಹೋವ ದೇವರು ಹೀಗೆನ್ನುತ್ತಾರೆ: ನೀವು ನಿಮ್ಮ ಪೂರ್ವಜನಾದ ಯೆಹೋನಾದಾಬನ ಅಪ್ಪಣೆಯನ್ನು ಕೇಳಿ, ಅವನ ಎಲ್ಲ ವಿಧಿಗಳನ್ನು ಅನುಸರಿಸಿ, ಅವನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ ಕಾರಣ</verse>
				<verse number="19">ರೇಕಾಬನ ಮಗ ಯೋನಾದಾಬನ ಸಂತಾನದವರಲ್ಲಿ ನನ್ನ ಸಮ್ಮುಖ ಸೇವೆ ಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು, ಇಸ್ರಾಯೇಲರ ದೇವರೂ ಸರ್ವಶಕ್ತರೂ ಆದ ಯೆಹೋವ ದೇವರು ಇದನ್ನು ನುಡಿದಿದ್ದಾರೆ,” ಎಂದನು.</verse>
			</chapter>
			<chapter number="36">
				<verse number="1">ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೆಯ ವರ್ಷದಲ್ಲಿ ಯೆರೆಮೀಯನಿಗೆ ಯೆಹೋವ ದೇವರಿಂದ ಈ ವಾಕ್ಯವು ಬಂದಿತು:</verse>
				<verse number="2">“ಗ್ರಂಥದ ಸುರುಳಿಯನ್ನು ತೆಗೆದುಕೊಂಡು ನಾನು ಇಸ್ರಾಯೇಲ್, ಯೆಹೂದ ಮತ್ತು ಸಕಲ ಜನಾಂಗಗಳ ವಿರೋಧವಾಗಿಯೂ ನಿನ್ನ ಸಂಗಡ ಮಾತನಾಡಿದ ದಿನದಿಂದ, ಯೋಷೀಯನ ದಿವಸಗಳು ಮೊದಲುಗೊಂಡು ಈ ದಿವಸದವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.</verse>
				<verse number="3">ಒಂದು ವೇಳೆ ಯೆಹೂದದ ಮನೆತನದವರು ನಾನು ಅವರಿಗೆ ಮಾಡುವುದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ, ಅವರ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು,” ಎಂದನು.</verse>
				<verse number="4">ಆಗ ಯೆರೆಮೀಯನು ನೇರೀಯನ ಮಗ ಬಾರೂಕನನ್ನು ಕರೆದನು. ಬಾರೂಕನು ಯೆರೆಮೀಯನ ಬಾಯಿಂದ ಯೆಹೋವ ದೇವರು ಅವನಿಗೆ ಹೇಳಿದ್ದ ಮಾತುಗಳನ್ನೆಲ್ಲಾ ಕೇಳಿ, ಗ್ರಂಥದ ಸುರುಳಿಯನ್ನು ಬರೆದನು.</verse>
				<verse number="5">ಆಮೇಲೆ ಯೆರೆಮೀಯನು ಬಾರೂಕನಿಗೆ ಆಜ್ಞಾಪಿಸಿದ್ದೇನೆಂದರೆ, “ನಾನು ಇಲ್ಲಿ ಬಂಧಿಸಲಾಗಿದ್ದೇನೆ. ಯೆಹೋವ ದೇವರ ಆಲಯಕ್ಕೆ ಹೋಗಲಾರೆನು.</verse>
				<verse number="6">ಆದ್ದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ, ನೀನು ಬರೆದು ಸುರುಳಿಯಲ್ಲಿ ಯೆಹೋವ ದೇವರ ಆಲಯದೊಳಗೆ ಉಪವಾಸದ ದಿವಸದಲ್ಲಿ ಯೆಹೋವ ದೇವರ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು.</verse>
				<verse number="7">ಒಂದು ವೇಳೆ ಅವರ ವಿಜ್ಞಾಪನೆ ಯೆಹೋವ ದೇವರ ಮುಂದೆ ಬಂದೀತು. ಅವರು ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು. ಏಕೆಂದರೆ ಯೆಹೋವ ದೇವರು ಈ ಜನರಿಗೆ ವಿರೋಧವಾಗಿ ಪ್ರಕಟಿಸಿರುವ ಕೋಪವೂ, ಉರಿಯೂ ಅಪಾರವಾಗಿದೆ.”</verse>
				<verse number="8">ಆಗ ನೇರೀಯನ ಮಗ ಬಾರೂಕನು ಪ್ರವಾದಿಯಾದ ಯೆರೆಮೀಯನು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿ, ಸುರುಳಿಯಲ್ಲಿನ ಯೆಹೋವ ದೇವರ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಓದಿದನು.</verse>
				<verse number="9">ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ಐದನೆಯ ವರ್ಷದ ಒಂಬತ್ತನೆಯ ತಿಂಗಳಲ್ಲಿ ಅವರು ಯೆರೂಸಲೇಮಿನಲ್ಲಿರುವ ಎಲ್ಲಾ ಜನರಿಗೂ, ಯೆಹೂದದ ಪಟ್ಟಣಗಳಿಂದ ಯೆರೂಸಲೇಮಿಗೆ ಬಂದ ಜನರೆಲ್ಲರಿಗೂ ಯೆಹೋವ ದೇವರ ಸನ್ನಿಧಿಯಲ್ಲಿ ಉಪವಾಸವನ್ನು ಸಾರಿದನು.</verse>
				<verse number="10">ಆಗ ಬಾರೂಕನು ಪುಸ್ತಕದಿಂದ ಯೆರೆಮೀಯನ ವಾಕ್ಯಗಳನ್ನು ಯೆಹೋವ ದೇವರ ಆಲಯದಲ್ಲಿ ಲೇಖಕನಾಗಿರುವ ಶಾಫಾನನ ಮಗನಾಗಿರುವ ಗೆಮರೀಯನ ಕೊಠಡಿಯಲ್ಲಿ ಮೇಲಿನ ಅಂಗಳದಲ್ಲಿ, ಯೆಹೋವ ದೇವರ ಆಲಯದ ಹೊಸ ಬಾಗಿಲಿನ ಪ್ರವೇಶದಲ್ಲಿ ಎಲ್ಲಾ ಜನರು ಕೇಳುವಂತೆ ಓದಿ ಹೇಳಿದನು.</verse>
				<verse number="11">ಶಾಫಾನನ ಮೊಮ್ಮಗನೂ, ಗೆಮರೀಯನ ಮಗನೂ ಆದ ಮೀಕಾಯನು ಸುರುಳಿಯಿಂದ ಓದಲಾದ ಯೆಹೋವ ದೇವರ ವಾಕ್ಯಗಳನ್ನು ಕೇಳಿದನು. ಅಲ್ಲಿಂದ ಅರಮನೆಯಲ್ಲಿದ್ದ ಲೇಖಕನ ಕೊಠಡಿಗೆ ಇಳಿದು ಹೋದನು.</verse>
				<verse number="12">ಅಲ್ಲಿ ಲೇಖಕ ಎಲೀಷಾಮನು, ಶೆಮಾಯನ ಮಗ ದೆಲಾಯನು, ಅಕ್ಬೋರನ ಮಗ ಎಲ್ನಾಥಾನನು, ಶಾಫಾನನ ಮಗ ಗೆಮರೀಯನು, ಹನನ್ಯನ ಮಗ ಚಿದ್ಕೀಯನು ಹೀಗೆ ರಾಜ್ಯಾಧಿಕಾರಿಗಳೆಲ್ಲರೂ ಕುಳಿತುಕೊಂಡಿದ್ದರು.</verse>
				<verse number="13">ಆಗ ಮೀಕಾಯನು ಅವರಿಗೆ ಬಾರೂಕನು ಆ ಪುಸ್ತಕವನ್ನು ಜನರಿಗೆ ಓದಿ ಹೇಳಿದಾಗ, ತಾನು ಕೇಳಿದ ವಾಕ್ಯಗಳನ್ನೆಲ್ಲಾ ತಿಳಿಸಿದನು.</verse>
				<verse number="14">ಅಧಿಕಾರಿಗಳೆಲ್ಲರು ಸೇರಿ ನೆತನ್ಯನ ಮಗನೂ, ಶೆಲೆಮ್ಯನ ಮೊಮ್ಮಗನೂ, ಕೂಷಿಯ ಮರಿಮಗನೂ ಆದ ಯೆಹೂದಿಯನ್ನು ಬಾರೂಕನ ಬಳಿಗೆ ಕಳುಹಿಸಿದನು. “ನೀನು ಜನರ ಮುಂದೆ ಓದಿದ ಸುರುಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ,” ಎಂದು ಹೇಳಿ ಕಳುಹಿಸಿದರು. ಅಂತೆಯೇ ನೇರೀಯನ ಮಗ ಬಾರೂಕನು ಸುರುಳಿಯನ್ನು ತನ್ನ ಕೈಯಲ್ಲೆ ತೆಗೆದುಕೊಂಡು ಅವರ ಬಳಿಗೆ ಕೂಡಲೇ ಬಂದನು.</verse>
				<verse number="15">ಆಗ ಅವರು ಅವನಿಗೆ, “ಈಗ ಕುಳಿತುಕೊಂಡು ನಮಗೆ ಓದಿ ಹೇಳು,” ಎಂದರು. ಆಗ ಬಾರೂಕನು ಅವರಿಗೆ ಓದಿ ಹೇಳಿದನು.</verse>
				<verse number="16">ಆಗ ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು, “ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇವೆ,” ಎಂದು ಬಾರೂಕನಿಗೆ ಹೇಳಿದರು.</verse>
				<verse number="17">ಅವರು ಬಾರೂಕನಿಗೆ, “ನೀನು ಅವನ ಬಾಯಿಂದ ಈ ವಾಕ್ಯಗಳನ್ನೆಲ್ಲಾ ಹೇಗೆ ಬರೆದೆ, ನಮಗೆ ತಿಳಿಸು,” ಎಂದರು.</verse>
				<verse number="18">ಆಗ ಬಾರೂಕನು ಅವರಿಗೆ, “ಅವನು ಈ ವಾಕ್ಯಗಳನ್ನೆಲ್ಲಾ ನನಗೆ ಹೇಳಿಕೊಟ್ಟನು. ನಾನು ಅವುಗಳನ್ನು ಮಸಿಯಿಂದ ಸುರುಳಿಯಲ್ಲಿ ಬರೆದೆನು,” ಎಂದನು.</verse>
				<verse number="19">ಆಗ ಪ್ರಧಾನರು ಬಾರೂಕನಿಗೆ, “ನೀನೂ, ಯೆರೆಮೀಯನೂ ಹೋಗಿ ಅಡಗಿಕೊಳ್ಳಿರಿ; ನೀವು ಎಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು,” ಎಂದರು.</verse>
				<verse number="20">ಆಮೇಲೆ ಅವರು ಅರಸನ ಬಳಿಗೆ ಅಂಗಳಕ್ಕೆ ಹೋದರು; ಆದರೆ ಆ ಸುರುಳಿಯನ್ನು ಲೇಖಕನಾದ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟರು ಮತ್ತು ಅರಸನಿಗೆ ಆ ವಾಕ್ಯಗಳನ್ನೆಲ್ಲಾ ಹೇಳಿದರು.</verse>
				<verse number="21">ಹೀಗೆ ಅರಸನು ಯೆಹೂದಿಯನ್ನು, ಆ ಸುರುಳಿಯನ್ನು ತೆಗೆದುಕೊಂಡು ಬರುವ ಹಾಗೆ ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು. ಯೆಹೂದಿಯು ಅದನ್ನು ಅರಸನಿಗೂ, ಅರಸನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನರಿಗೂ ಓದಿ ಹೇಳಿದನು.</verse>
				<verse number="22">ಆಗ ಒಂಬತ್ತನೆಯ ತಿಂಗಳಿನ ಅರಸನು ಚಳಿಗಾಲದ ಮನೆಯಲ್ಲಿ ಕುಳಿತುಕೊಂಡಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯಲ್ಲಿ ಬೆಂಕಿ ಉರಿಯುತ್ತಿತ್ತು.</verse>
				<verse number="23">ಆಗ ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿಯಿಂದ ಕೊಯ್ದು, ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರುಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟುಹೋಗುವವರೆಗೂ ಹಾಕಿಬಿಟ್ಟನು.</verse>
				<verse number="24">ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ, ಅವರ ಸೇವಕರಾದ ಒಬ್ಬರಾದರೂ ಹೆದರಲಿಲ್ಲ.</verse>
				<verse number="25">ಹೀಗಾದರೂ ಎಲ್ನಾಥಾನನೂ, ದೆಲಾಯನೂ, ಗೆಮರೀಯನೂ ಆ ಸುರುಳಿಯನ್ನು ಸುಡಬಾರದೆಂದು ಅರಸನಿಗೆ ಬಿನ್ನಹ ಮಾಡಿದರು; ಆದರೆ ಅವನು ಅವರಿಗೆ ಕಿವಿಗೊಡಲಿಲ್ಲ.</verse>
				<verse number="26">ಆದರೆ ಅರಸನು ರಾಜಪುತ್ರ ಯೆರಹ್ಮೇಲನಿಗೂ, ಅಜ್ರಿಯೇಲನ ಮಗನಾದ ಸೆರಾಯನಿಗೂ, ಅಬ್ದೆಯೇಲನ ಮಗ ಶೆಲೆಮ್ಯನಿಗೂ, ಲೇಖಕನಾದ ಬಾರೂಕನನ್ನೂ, ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಯೆಹೋವ ದೇವರು ಅವರನ್ನು ಅಡಗಿಸಿದ್ದರು.</verse>
				<verse number="27">ಅರಸನು ಆ ಸುರುಳಿಯನ್ನು ಬಾರೂಕನು ಯೆರೆಮೀಯನ ಬಾಯಿಂದ ಬರೆದಿದ್ದ ವಾಕ್ಯಗಳನ್ನೂ, ಸುಟ್ಟ ಮೇಲೆ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಬಂದಿತು:</verse>
				<verse number="28">“ನೀನು ಮತ್ತೊಂದು ಸುರುಳಿಯನ್ನು ತೆಗೆದುಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಮುಂಚಿನ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ.</verse>
				<verse number="29">ಯೆಹೂದದ ಅರಸನಾದ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ಬಾಬಿಲೋನಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ, ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಹಾಳು ಮಾಡುವುದು ಖಂಡಿತ, ಎಂದು ಇದರಲ್ಲಿ ಏಕೆ ಬರೆದಿದ್ದೀ?” ಎಂದು ಹೇಳಿ ನೀನು ಈ ಸುರುಳಿಯನ್ನು ಸುಟ್ಟಿದ್ದೀ.</verse>
				<verse number="30">ಆದ್ದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: ದಾವೀದನ ಸಿಂಹಾಸನದಲ್ಲಿ ಕುಳಿತುಕೊಳ್ಳುವವನು ಅವನಿಗೆ ಇರುವುದಿಲ್ಲ. ಅವನ ಹೆಣವು ಹಗಲಿನಲ್ಲಿ ಬಿಸಿಲಿಗೂ, ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲಾಗುವುದು.</verse>
				<verse number="31">ಅವನನ್ನೂ, ಅವನ ಸಂತಾನವನ್ನೂ, ಅವನ ಸೇವಕರನ್ನೂ, ಅವರ ಅಕ್ರಮಕ್ಕಾಗಿ ದಂಡಿಸುವೆನು. ಅವರ ಮೇಲೆಯೂ, ಯೆರೂಸಲೇಮಿನ ನಿವಾಸಿಗಳ ಮೇಲೆಯೂ, ಯೆಹೂದದ ಮನುಷ್ಯರ ಮೇಲೆಯೂ ನಾನು ಅವರಿಗೆ ವಿರೋಧವಾಗಿ ಮಾತಾಡಿದಂಥ ಅವರು ಕಿವಿಗೊಡದಂಥ ಕೇಡನ್ನೆಲ್ಲಾ ಬರಮಾಡುವೆನು.’ ”</verse>
				<verse number="32">ಆಗ ಯೆರೆಮೀಯನು ಮತ್ತೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗ ಲೇಖಕನಾದ ಬಾರೂಕನಿಗೆ ಕೊಟ್ಟನು. ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಸುರುಳಿಯ ವಾಕ್ಯಗಳನ್ನೆಲ್ಲಾ ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು. ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲಾದವು.</verse>
			</chapter>
			<chapter number="37">
				<verse number="1">ಯೋಷೀಯನ ಮಗ ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಅರಸನನ್ನಾಗಿ ಮಾಡಿದನು. ಅವನು ಯೆಹೋಯಾಕೀಮನ ಮಗ ಕೊನ್ಯನಿಗೆ ಬದಲಾಗಿ, ಅರಸನಾಗಿ ಆಳಿದನು.</verse>
				<verse number="2">ಆದರೆ ಅವನೂ ಅವನ ಸೇವಕರೂ ದೇಶದ ಜನರೂ ಯೆಹೋವ ದೇವರ ಪ್ರವಾದಿಯಾದ ಯೆರೆಮೀಯನಿಂದ ಹೇಳಿಸಿದ ವಾಕ್ಯಗಳಿಗೆ ಕಿವಿಗೊಡಲಿಲ್ಲ.</verse>
				<verse number="3">ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲನನ್ನೂ, ಯಾಜಕನಾದ ಮಾಸೇಯನ ಮಗನಾದ ಚೆಫನ್ಯನನ್ನೂ, ಪ್ರವಾದಿಯಾದ ಯೆರೆಮೀಯನ ಬಳಿಗೆ ಕಳುಹಿಸಿ, “ನಮಗೋಸ್ಕರ ನಮ್ಮ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸು,” ಎಂದು ಹೇಳಿಸಿದನು.</verse>
				<verse number="4">ಆಗ ಯೆರೆಮೀಯನು ಜನರೊಳಗೆ ಬರುತ್ತಾ ಹೋಗುತ್ತಾ ಇದ್ದನು. ಏಕೆಂದರೆ ಅವರು ಅವನನ್ನು ಸೆರೆಮನೆಯಲ್ಲಿ ಇಡಲಿಲ್ಲ.</verse>
				<verse number="5">ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತು. ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಿದ್ದ ಕಸ್ದೀಯರು ಅದರ ಸುದ್ದಿಯನ್ನು ಕೇಳಿ, ಯೆರೂಸಲೇಮನ್ನು ಬಿಟ್ಟುಹೋದರು.</verse>
				<verse number="6">ಆಗ ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಯೆರೆಮೀಯನಿಗೆ ಬಂದಿತು:</verse>
				<verse number="7">“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನೆಂದರೆ, ಇಗೋ, ನಿಮ್ಮ ಸಹಾಯಕ್ಕೆ ಹೊರಟ, ‘ಫರೋಹನ ಸೈನ್ಯವು, ಅದರ ಸ್ವದೇಶವಾದ ಈಜಿಪ್ಟಿಗೆ ಹಿಂದಿರುಗುವುದು.</verse>
				<verse number="8">ಕಸ್ದೀಯರು ತಿರುಗಿಕೊಂಡು, ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡಿ, ಅದನ್ನು ಹಿಡಿದು ಬೆಂಕಿಯಿಂದ ಸುಡುವರು.’</verse>
				<verse number="9">“ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಕಸ್ದೀಯರು ನಿಜವಾಗಿ ನಮ್ಮನ್ನು ಬಿಟ್ಟು ಹೋಗುವರು,’ ಎಂದುಕೊಂಡು ನಿಮ್ಮನ್ನು ನೀವೇ ಮೋಸಗೊಳಿಸಬೇಡಿರಿ; ಏಕೆಂದರೆ ಅವರು ತೊಲಗುವುದೇ ಇಲ್ಲ.</verse>
				<verse number="10">ನಿಮ್ಮ ಸಂಗಡ ಯುದ್ಧಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿದ್ದಾಗ್ಯೂ, ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು, ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.”</verse>
				<verse number="11">ಕಸ್ದೀಯರ ದಂಡು ಫರೋಹನ ದಂಡಿನ ಭಯದ ನಿಮಿತ್ತ, ಯೆರೂಸಲೇಮನ್ನು ಬಿಟ್ಟುಹೋದ ಮೇಲೆ,</verse>
				<verse number="12">ಯೆರೆಮೀಯನು ಬೆನ್ಯಾಮೀನನ ದೇಶಕ್ಕೆ ಹೋಗುವುದಕ್ಕೂ, ಜನರ ಮಧ್ಯದಿಂದ ತನ್ನ ಪಾಲನ್ನು ತೆಗೆದುಕೊಳ್ಳುವುದಕ್ಕೂ ಯೆರೂಸಲೇಮಿನಿಂದ ಹೊರಟನು.</verse>
				<verse number="13">ಆಗ ಅವನು ಬೆನ್ಯಾಮೀನನ ಬಾಗಿಲಲ್ಲಿ ಇರುವಾಗ, ಅಲ್ಲಿ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನಾದ ಇರೀಯನೆಂಬ ಪಹರೆಯ ನಾಯಕನು ಇದ್ದನು. ಇವನು ಪ್ರವಾದಿಯಾದ ಯೆರೆಮೀಯನನ್ನು, “ನೀನು ಕಸ್ದೀಯರ ಪಕ್ಷಕ್ಕೆ ಸೇರುತ್ತೀ,” ಎಂದು ಹೇಳಿ ಹಿಡಿದನು.</verse>
				<verse number="14">ಆದರೆ ಯೆರೆಮೀಯನು ಹೇಳಿದ್ದೇನೆಂದರೆ, ಸುಳ್ಳು; ನಾನು ಕಸ್ದೀಯರ ಕಡೆಗೆ ಸೇರುವವನಲ್ಲ. ಆದರೆ ಇರೀಯನು ಅವನಿಗೆ ಕಿವಿಗೊಡದೆ ಯೆರೆಮೀಯನನ್ನು ಹಿಡಿದು ಪ್ರಧಾನರ ಬಳಿಗೆ ತಂದನು.</verse>
				<verse number="15">ಆಗ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು, ಅವನನ್ನು ಹೊಡೆದು, ಲೇಖಕನಾದ ಯೋನಾತಾನನ ಮನೆಯಲ್ಲಿ ಬಂಧನದಲ್ಲಿ ಇಟ್ಟರು. ಏಕೆಂದರೆ ಅದನ್ನು ಸೆರೆಮನೆಯಾಗಿ ಮಾಡಿದ್ದರು.</verse>
				<verse number="16">ಯೆರೆಮೀಯನು ಆ ಬಂಧಿಖಾನೆಯ ನೆಲಮನೆಗಳಲ್ಲಿ ಕೆಲವು ದಿವಸ ಇದ್ದನು.</verse>
				<verse number="17">ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, ಅರಮನೆಗೆ ಕರೆತಂದನು, “ಯೆಹೋವ ದೇವರಿಂದ ಮಾತು ಉಂಟೋ,” ಎಂದು ಹೇಳಿದನು. ಯೆರೆಮೀಯನು, “ಹೌದು, ಉಂಟು. ನೀನು ಬಾಬಿಲೋನಿನ ಅರಸನ ಕೈಗೆಸಿಕ್ಕಿಬೀಳುವೆ,” ಎಂದನು.</verse>
				<verse number="18">ಇದಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ ಹೇಳಿದ್ದೇನೆಂದರೆ: “ನೀವು ನನ್ನನ್ನು ಸೆರೆಮನೆಯಲ್ಲಿ ಹಾಕುವ ಹಾಗೆ ನಾನು ನಿನಗೂ, ನಿನ್ನ ಸೇವಕರಿಗೂ, ಈ ಜನರಿಗೂ ವಿರೋಧವಾಗಿ ಏನು ಅಪರಾಧ ಮಾಡಿದ್ದೇನೆ?</verse>
				<verse number="19">ಬಾಬಿಲೋನಿನ ಅರಸನು ನಿಮ್ಮ ಮೇಲೆಯೂ, ಈ ದೇಶದ ಮೇಲೆಯೂ ಬರುವುದಿಲ್ಲವೆಂದು ನಿಮಗೆ ಪ್ರವಾದಿಸಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?</verse>
				<verse number="20">ಆದ್ದರಿಂದ ಈಗ ಕಿವಿಗೊಡು. ನನ್ನ ಒಡೆಯನಾದ ಅರಸನೇ, ನನ್ನ ವಿಜ್ಞಾಪನೆ ನಿನ್ನ ಮುಂದೆ ಅಂಗೀಕಾರವಾಗಲಿ. ಲೇಖಕನಾದ ಯೋನಾತಾನನ ಮನೆಗೆ ನಾನು ಅಲ್ಲಿ ಸಾಯದ ಹಾಗೆ ನನ್ನನ್ನು ತಿರುಗಿ ಕಳುಹಿಸಬೇಡ,” ಎಂದನು.</verse>
				<verse number="21">ಆಗ ಅರಸನಾದ ಚಿದ್ಕೀಯನು ಯೆರೆಮೀಯನನ್ನು ಸೆರೆಮನೆಯ ಅಂಗಳದಲ್ಲಿ ಇರಿಸಬೇಕೆಂದೂ, ಪಟ್ಟಣದಲ್ಲಿರುವ ರೊಟ್ಟಿಯೆಲ್ಲಾ ಮುಗಿದು ಹೋಗುವವರೆಗೆ, ಅವನಿಗೆ ರೊಟ್ಟಿಗಾರರ ಬೀದಿಯಿಂದ ದಿನಕ್ಕೆ ಒಂದು ತುಂಡು ರೊಟ್ಟಿ ಕೊಡಬೇಕೆಂದು ಆಜ್ಞಾಪಿಸಿದನು; ಹಾಗೆಯೇ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ನಿಂತನು.</verse>
			</chapter>
			<chapter number="38">
				<verse number="1">ಮತ್ತಾನನ ಮಗ ಶೆಫಟ್ಯ, ಪಷ್ಹೂರನ ಮಗ ಗೆದಲ್ಯ, ಶೆಲೆಮ್ಯನ ಮಗ ಯೂಕಲ ಹಾಗೂ ಮಲ್ಕೀಯನ ಮಗ ಪಷ್ಹೂರ, ಇವರು ಯೆರೆಮೀಯನು ಜನರೆಲ್ಲರಿಗೆ ಹೇಳುತ್ತಿದ್ದುದನ್ನು ಕೇಳುತ್ತಿದ್ದರು.</verse>
				<verse number="2">“ಯೆಹೋವ ದೇವರು ಹೀಗೆನ್ನುತ್ತಾರೆ: ‘ನಗರದಲ್ಲಿ ನಿಲ್ಲುವವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವರು. ನಗರವನ್ನು ಬಿಟ್ಟು ಹೋಗಿ, ಬಾಬಿಲೋನಿಯರನ್ನು ಮೊರೆಹೋಗುವವರು ಬದುಕುವರು. ತಮ್ಮ ಪ್ರಾಣದೊಂದಿಗೆ ತಪ್ಪಿಸಿಕೊಂಡವರು, ಬದುಕುವರು.</verse>
				<verse number="3">ಬಾಬಿಲೋನಿನ ಅರಸನು ಈ ನಗರವನ್ನು ಆಕ್ರಮಿಸುವನು. ಇದು ಅವನ ವಶವಾಗುವುದು ನಿಶ್ಚಯ,’ ಎಂದು ಯೆಹೋವ ದೇವರು ಸಾರುತ್ತಿದ್ದಾರೆ.”</verse>
				<verse number="4">ಆಗ ಆ ಪ್ರಧಾನರು ಅರಸನಿಗೆ, “ಈ ಮನುಷ್ಯನು ಸಾಯಬೇಕು; ಇವನು ಅವರ ಸಂಗಡ ಇಂಥಾ ಮಾತುಗಳನ್ನು ಆಡಿ, ಈ ಪಟ್ಟಣದಲ್ಲಿ ಉಳಿದ ಎಲ್ಲಾ ಸೈನಿಕರನ್ನೂ, ಎಲ್ಲಾ ಜನರನ್ನೂ ಎದೆಗುಂದುವಂತೆ ಮಾಡುತ್ತಿದ್ದಾನೆ. ಈ ಮನುಷ್ಯನು ಈ ಜನರ ಕ್ಷೇಮವನ್ನಲ್ಲ, ಅವರ ಹಾನಿಯನ್ನೇ ಹಾರೈಸುತ್ತಾನೆ,” ಎಂದು ಹೇಳಿದರು.</verse>
				<verse number="5">ಆಗ ಅರಸನಾದ ಚಿದ್ಕೀಯನು, “ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡುವುದಿಲ್ಲ,” ಎಂದನು.</verse>
				<verse number="6">ಆಗ ಅವರು ಯೆರೆಮೀಯನನ್ನು ತಮ್ಮ ವಶಕ್ಕೆ ತೆಗೆದುಕೊಂಡರು. ಸೆರೆಮನೆಯ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯಲ್ಲಿ ನೀರು ಇರಲಿಲ್ಲ. ಕೆಸರು ಮಾತ್ರ ಇತ್ತು. ಯೆರೆಮೀಯನನ್ನು ಕೆಸರಿನಲ್ಲಿ ಹಾಕಿದರು.</verse>
				<verse number="7">ಆಗ ಅರಸನು ಮನೆಯಲ್ಲಿರುವ ಕಂಚುಕಿಯಾದ ಕೂಷ್ಯನಾದ ಎಬೆದ್ಮೆಲೆಕನು ಅವರು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದರೆಂದು ಕೇಳಿದಾಗ, ಅರಸನು ಬೆನ್ಯಾಮೀನನ ಬಾಗಿಲಲ್ಲಿ ಕೂತಿರಲಾಗಿ,</verse>
				<verse number="8">ಎಬೆದ್ಮೆಲೆಕನು ಅರಸನ ಅರಮನೆಯನ್ನು ಬಿಟ್ಟು, ಹೊರಟು ಅರಸನ ಸಂಗಡ ಮಾತನಾಡಿ,</verse>
				<verse number="9">“ನನ್ನ ಒಡೆಯನಾದ ಅರಸನೇ, ಈ ಮನುಷ್ಯರು ಬಾವಿಯಲ್ಲಿ ಹಾಕಿದ ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ಕೇಡಿಗಾಗಿ ಮಾಡಿದ್ದಾರೆ; ಅವನು ಇರುವಲ್ಲಿ ಹಸಿವೆಯಿಂದ ಸಾಯುವವನಾಗಿದ್ದಾನೆ; ಏಕೆಂದರೆ ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ,” ಎಂದನು.</verse>
				<verse number="10">ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿಯನ್ನು ಕರೆದುಕೊಂಡು ಹೋಗಿ, ಪ್ರವಾದಿಯಾದ ಯೆರೆಮೀಯನನ್ನು ಅವನು ಸಾಯುವುದಕ್ಕಿಂತ ಮುಂಚೆ ಬಾವಿಯೊಳಗಿಂದ ಮೇಲಕ್ಕೆತ್ತು,” ಎಂದು ಆಜ್ಞಾಪಿಸಿದನು.</verse>
				<verse number="11">ಆಗ ಎಬೆದ್ಮೆಲೆಕನು ಆ ಮನುಷ್ಯರನ್ನು ಕರೆದುಕೊಂಡು, ಖಜಾನೆ ಕೆಳಗಿರುವ ಅರಮನೆಗೆ ಹೋಗಿ, ಅಲ್ಲಿಂದ ಹರಿದುಹೋದ ಹಳೆಯ ಬಟ್ಟೆಗಳನ್ನೂ, ಸವೆದು ಹೋದ ಹಳೆಯ ವಸ್ತ್ರಗಳನ್ನೂ ತೆಗೆದುಕೊಂಡು, ಅವುಗಳನ್ನು ಹಗ್ಗಗಳಂತೆ ಯೆರೆಮೀಯನ ಬಳಿಗೆ ಬಾವಿಯೊಳಗೆ ಇಳಿಸಿದನು.</verse>
				<verse number="12">ಕೂಷ್ಯನಾದ ಎಬೆದ್ಮೆಲೆಕನು ಯೆರೆಮೀಯನಿಗೆ, “ಈ ಹರಿದು ಸವೆದು ಹೋದ ಹಳೆಯ ಬಟ್ಟೆಗಳನ್ನು ಹಗ್ಗಗಳ ಕೆಳಗೆ ನಿನ್ನ ಕಂಕಳುಗಳಲ್ಲಿ ಇಟ್ಟುಕೋ,” ಎಂದನು. ಯೆರೆಮೀಯನು ಹಾಗೆ ಮಾಡಿದನು.</verse>
				<verse number="13">ಹೀಗೆ ಹಗ್ಗಗಳಿಂದ ಯೆರೆಮೀಯನನ್ನು ಎಳೆದು, ಅವನನ್ನು ಬಾವಿಯೊಳಗಿಂದ ಎತ್ತಿದನು. ಆಮೇಲೆ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ಉಳಿದನು.</verse>
				<verse number="14">ಆಗ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ತನ್ನ ಬಳಿಗೆ ಕರೆಯಿಸಿ, ಯೆಹೋವ ದೇವರ ಆಲಯದಲ್ಲಿರುವ ಮೂರನೆಯ ದ್ವಾರಕ್ಕೆ ಕರೆದುಕೊಂಡು ಹೋದನು. ಆಗ ಅರಸನು ಯೆರೆಮೀಯನಿಗೆ, “ನಾನು ನಿನ್ನಿಂದ ಒಂದು ಕೇಳುತ್ತೇನೆ, ನನಗೆ ಯಾವುದನ್ನಾದರೂ ಬಚ್ಚಿಡಬೇಡ,” ಎಂದನು.</verse>
				<verse number="15">ಆಗ ಯೆರೆಮೀಯನು ಚಿದ್ಕೀಯನಿಗೆ, “ನಾನು ನಿನಗೆ ತಿಳಿಸಿದರೆ, ನೀನು ನನ್ನನ್ನು ನಿಶ್ಚಯವಾಗಿ ಕೊಂದು ಹಾಕುವುದಿಲ್ಲವೋ? ನಾನು ನಿನಗೆ ಆಲೋಚನೆ ಹೇಳಿದರೆ, ನೀನು ನನ್ನನ್ನು ಕೇಳುವುದಿಲ್ಲ,” ಎಂದು ಹೇಳಿದನು.</verse>
				<verse number="16">ಹೀಗೆ ಅರಸನಾದ ಚಿದ್ಕೀಯನು ಯೆರೆಮೀಯನಿಗೆ ಅಂತರಂಗದಲ್ಲಿ ಪ್ರಮಾಣಮಾಡಿ, “ನಮಗೆ ಈ ಪ್ರಾಣವನ್ನು ಉಂಟುಮಾಡಿದ ಯೆಹೋವ ದೇವರ ಜೀವದಾಣೆ, ನಾನು ನಿನ್ನನ್ನು ಕೊಂದುಹಾಕುವುದಿಲ್ಲ; ನಿನ್ನ ಪ್ರಾಣವನ್ನು ಹುಡುಕುವ ಈ ಮನುಷ್ಯರ ಕೈಯಲ್ಲಿ ಒಪ್ಪಿಸುವುದಿಲ್ಲ,” ಎಂದನು.</verse>
				<verse number="17">ಆಗ ಯೆರೆಮೀಯನು ಚಿದ್ಕೀಯನಿಗೆ ಹೇಳಿದ್ದೇನೆಂದರೆ, “ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀನು ನಿಶ್ಚಯವಾಗಿ ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ, ನಿನ್ನ ಪ್ರಾಣವು ಬದುಕುವುದು. ಈ ಪಟ್ಟಣವು ಬೆಂಕಿಯಿಂದ ಸುಡಲಾಗುವುದಿಲ್ಲ. ನೀನೂ, ನಿನ್ನ ಮನೆಯವರೂ ಬದುಕುವಿರಿ.</verse>
				<verse number="18">ಆದರೆ ನೀನು ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ, ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲಾಗುವುದು. ಅವರು ಅದನ್ನು ಬೆಂಕಿಯಿಂದ ಸುಡುವರು. ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವುದಿಲ್ಲ,’ ” ಎಂದನು.</verse>
				<verse number="19">ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನಾನು ಕಸ್ದೀಯರಿಗೆ ಒಳಗಾಗಿರುವ ಯೆಹೂದ್ಯರ ವಿಷಯ ಅಂಜುತ್ತೇನೆ. ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು. ಆಗ ಅವರು ನನ್ನನ್ನು ಹಿಂಸಿಸಬಹುದು,” ಎಂದನು.</verse>
				<verse number="20">ಆದರೆ ಯೆರೆಮೀಯನು, “ಅವರು ನಿನ್ನನ್ನು ಒಪ್ಪಿಸುವುದಿಲ್ಲ” ನಾನು ನಿನಗೆ ಹೇಳುವ ಯೆಹೋವ ದೇವರ ವಾಕ್ಯವನ್ನು ಮಾತ್ರ ಕೇಳು; ಆಗ ನಿನಗೆ ಒಳ್ಳೆಯದಾಗುವುದು. ನಿನ್ನ ಪ್ರಾಣ ಬದುಕುವುದು.</verse>
				<verse number="21">ಆದರೆ ನೀನು ಶರಣಾಗತಿಯನ್ನು ನಿರಾಕರಿಸಿದರೆ, ಯೆಹೋವ ದೇವರು ನನಗೆ ತೋರಿಸಿದ ಮಾತು ಇದೇ:</verse>
				<verse number="22">ಇಗೋ, ಯೆಹೂದದ ಅರಸನ ಅರಮನೆಯಲ್ಲಿ ಉಳಿದ ಹೆಂಗಸರೆಲ್ಲರು ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಕರೆತರಲಾಗಿ ಹೇಳುವುದೇನೆಂದರೆ, “ನಿನ್ನ ಸ್ನೇಹಿತರು ನಿನ್ನನ್ನು ಪ್ರೇರೇಪಿಸಿ, ನಿನ್ನನ್ನು ಗೆದ್ದಿದ್ದಾರೆ. ನಿನ್ನ ಕಾಲುಗಳು ಕೆಸರಿನಲ್ಲಿ ಹೂತಿರುವುದನ್ನು ನೋಡಿ, ಹಿಂದಿರುಗಿದ್ದಾರೆಂದು ನಿಂದಿಸುವರು.</verse>
				<verse number="23">“ಹಾಗೆ ನಿನ್ನ ಹೆಂಡತಿಯರನ್ನೂ, ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ಹೊರಗೆ ತರುವರು. ನೀನು ಅವರ ಕೈಗೆ ತಪ್ಪಿಸಿಕೊಳ್ಳುವುದಿಲ್ಲ. ಬಾಬಿಲೋನಿನ ಅರಸನ ಕೈಯಿಂದ ಸೆರೆಯಾಗುವೆ. ಈ ಪಟ್ಟಣವು ಬೆಂಕಿಯಿಂದ ಸುಟ್ಟುಹೋಗುವುದು,” ಎಂದನು.</verse>
				<verse number="24">ಆಗ ಚಿದ್ಕೀಯನು ಯೆರೆಮೀಯನಿಗೆ, “ನೀನು ಸಾಯದ ಹಾಗೆ ಈ ಮಾತುಗಳನ್ನು ಯಾರಿಗೂ ತಿಳಿಸಬಾರದು.</verse>
				<verse number="25">ಆದರೆ ಪ್ರಧಾನರು ನಾನು ನಿನ್ನ ಸಂಗಡ ಮಾತಾಡಿದ್ದೇನೆಂದು ಕೇಳಿ, ‘ನಿನ್ನ ಬಳಿಗೆ ಬಂದು, ನೀನು ಅರಸನಿಗೆ ಹೇಳಿದ್ದನ್ನು ನಮಗೆ ಮರೆಮಾಡದೆ ತಿಳಿಸು. ನಾವು ನಿನ್ನನ್ನು ಕೊಂದುಹಾಕುವುದಿಲ್ಲ. ಅರಸನು ನಿನ್ನ ಸಂಗಡ ಮಾತಾಡಿದ್ದನ್ನು ಸಹ ತಿಳಿಸು,’ ಎಂದು ಹೇಳಿದರೆ,</verse>
				<verse number="26">ನೀನು ಅವರಿಗೆ, ‘ನನ್ನನ್ನು ತಿರುಗಿ ಯೋನಾತಾನನ ಮನೆಗೆ ನಾನು ಅಲ್ಲಿ ಸಾಯುವ ಹಾಗೆ ತೆಗೆದುಕೊಂಡು ಹೋಗಬೇಡವೆಂದು ಅರಸನ ಮುಂದೆ ಬಿನ್ನಹ ಮಾಡಿದೆನೆಂದು ಹೇಳು,’ ಎಂದು ಹೇಳಿದನು.”</verse>
				<verse number="27">ಆಗ ಪ್ರಧಾನರೆಲ್ಲರೂ ಯೆರೆಮೀಯನ ಬಳಿಗೆ ಬಂದು ಅವನನ್ನು ಕೇಳಿದರು. ಅವನು ಅರಸನು ಆಜ್ಞಾಪಿಸಿದ ಈ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು. ಆಗ ಅವರು ಸುಮ್ಮನಾದರು. ಏಕೆಂದರೆ ಆ ಕಾರ್ಯದ ವಿಷಯವನ್ನು ಅವರು ಗ್ರಹಿಸಲಿಲ್ಲ.</verse>
				<verse number="28">ಈ ಪ್ರಕಾರ ಯೆರೂಸಲೇಮು ಸೆರೆಯಾಗುವ ದಿವಸದವರೆಗೆ ಯೆರೆಮೀಯನು ಸೆರೆಮನೆಯ ಅಂಗಳದಲ್ಲಿ ವಾಸವಾಗಿದ್ದನು. ಯೆರೂಸಲೇಮು ಹಿಡಿಯಲಾಗುವಾಗ ಅಲ್ಲೇ ಇದ್ದನು.</verse>
			</chapter>
			<chapter number="39">
				<verse number="1">ಯೆಹೂದದ ಅರಸನಾದ ಚಿದ್ಕೀಯನ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯದೊಂದಿಗೆ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದನ್ನು ಮುತ್ತಿಗೆ ಹಾಕಿದರು.</verse>
				<verse number="2">ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣವು ಒಡೆಯಲಾಯಿತು.</verse>
				<verse number="3">ನೇರ್ಗಲ್ ಸರೆಚರ್, ಸಮ್ಗರ್‌ನೆಬೊ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಚೋಯಿಸರ ಮುಖ್ಯಸ್ಥ ನೇರ್ಗಲ್ ಸರೆಚರ್, ಹೀಗೆ ಬಾಬಿಲೋನಿಯದ ಅರಸನ ಎಲ್ಲಾ ಪದಾಧಿಕಾರಿಗಳು ಪುರಪ್ರವೇಶ ಮಾಡಿ, ಮಧ್ಯಮ ದ್ವಾರದೊಳಗೆ ಕುಳಿತುಕೊಂಡರು.</verse>
				<verse number="4">ಇವರನ್ನು ನೋಡಿ ಯೆಹೂದದ ಅರಸನಾದ ಚಿದ್ಕೀಯನು ಮತ್ತು ಸಮಸ್ತ ಸೈನಿಕರು ಅದೇ ರಾತ್ರಿಯಲ್ಲಿ ಹೊರಟು, ಅರಸನ ಉದ್ಯಾನ ಮಾರ್ಗವಾಗಿ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನಿಂದ ನಗರವನ್ನು ಬಿಟ್ಟು, ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.</verse>
				<verse number="5">ಆಗ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ, ಯೆರಿಕೋವಿನ ಬಯಲು ಸ್ಥಳದಲ್ಲಿ ಚಿದ್ಕೀಯನನ್ನು ಹಿಡಿದರು. ಅನಂತರ ಹಮಾತ್ ನಾಡಿನ ರಿಬ್ಲದಲ್ಲಿರುವ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಅವನನ್ನು ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.</verse>
				<verse number="6">ಆ ಬಾಬಿಲೋನಿಯದ ಅರಸನು ಅಲ್ಲೇ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದನು. ಯೆಹೂದದ ಎಲ್ಲಾ ಶ್ರೇಷ್ಠರನ್ನೂ ರಿಬ್ಲದಲ್ಲಿ ಕೊಲ್ಲಿಸಿದನು.</verse>
				<verse number="7">ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಕಂಚಿನ ಬೇಡಿಹಾಕಿಸಿ, ಬಾಬಿಲೋನಿಗೆ ಸಾಗಿಸಿದನು.</verse>
				<verse number="8">ಅರಮನೆಯನ್ನೂ, ಜನರ ಮನೆಗಳನ್ನೂ, ಬಾಬಿಲೋನಿಯರು ಬೆಂಕಿಯಿಂದ ಸುಟ್ಟರು. ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.</verse>
				<verse number="9">ಆಗ ಪಟ್ಟಣದೊಳಗೆ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆ ಹೋದವರನ್ನೂ, ಇತರ ಸಮಸ್ತ ಜನರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಬಾಬಿಲೋನಿಗೆ ಸೆರೆಹಿಡಿದು ಕರೆದುಕೊಂಡು ಹೋದನು.</verse>
				<verse number="10">ಆದರೆ ಜನರೊಳಗೆ ಏನಿಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶದಲ್ಲಿ ಬಿಟ್ಟು, ಅವರಿಗೆ ಆಗಲೇ ದ್ರಾಕ್ಷಿತೋಟಗಳನ್ನೂ, ಹೊಲಗಳನ್ನೂ ಕೊಟ್ಟನು.</verse>
				<verse number="11">ಇದಲ್ಲದೆ ಯೆರೆಮೀಯನ ವಿಷಯವಾಗಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇನೆಂದರೆ:</verse>
				<verse number="12">“ಅವನನ್ನು ಚೆನ್ನಾಗಿ ನೋಡಿಕೋ, ಅವನಿಗೆ ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಹೇಗೆ ಹೇಳುವನೋ, ಹಾಗೆಯೇ ಅವನಿಗೆ ಮಾಡು,” ಎಂದನು.</verse>
				<verse number="13">ಹೀಗೆ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನನ್ನೂ, ಕಂಚುಕಿಯರ ಮುಖ್ಯಸ್ಥನಾದ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳನ್ನೂ ಕಳುಹಿಸಿದನು.</verse>
				<verse number="14">ಅವರು ಕಳುಹಿಸಿ ಯೆರೆಮೀಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ, ಶಾಫಾನನ ಮೊಮ್ಮಗನೂ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ, ಮನೆಗೆ ಕರೆದುಕೊಂಡು ಹೋಗಬೇಕೆಂದು ಅಪ್ಪಣೆಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.</verse>
				<verse number="15">ಯೆರೆಮೀಯನು ಸೆರೆಮನೆಯ ಅಂಗಳದಲ್ಲಿರುವಾಗ ಯೆಹೋವ ದೇವರ ವಾಕ್ಯವು ಅವನಿಗೆ ಹೇಳಿದ್ದೇನೆಂದರೆ:</verse>
				<verse number="16">“ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನ ಸಂಗಡ ಮಾತನಾಡಿ, ಹೇಳತಕ್ಕದ್ದೇನೆಂದರೆ: ‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಒಳ್ಳೆಯದಕ್ಕಾಗಿ ಅಲ್ಲ, ಕೆಟ್ಟದ್ದಕ್ಕಾಗಿ ನನ್ನ ಮಾತುಗಳನ್ನು ಈ ಪಟ್ಟಣದ ಮೇಲೆ ಬರಮಾಡುತ್ತೇನೆ. ಅವು ಆ ದಿವಸಗಳಲ್ಲಿ ನಿನ್ನ ಮುಂದೆಯೇ ನೆರವೇರುವುವು.</verse>
				<verse number="17">ಆದರೆ ಆ ದಿವಸದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲಾಗುವುದಿಲ್ಲ.</verse>
				<verse number="18">ಏಕೆಂದರೆ ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು. ನೀನು ಖಡ್ಗದಿಂದ ಬೀಳುವುದಿಲ್ಲ. ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ, ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವುದೆಂದು ಯೆಹೋವ ದೇವರು ಹೇಳುತ್ತಾರೆ,’ ” ಎಂಬುದು.</verse>
			</chapter>
			<chapter number="40">
				<verse number="1">ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ಸಂಕೋಲೆಗಳಿಂದ ಕಟ್ಟಿಸಿ, ಬಾಬಿಲೋನಿಗೆ ಒಯ್ಯುವ ಯೆರೂಸಲೇಮಿನ ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತೆಗೆದುಕೊಂಡುಹೋಗಿ, ರಾಮದಿಂದ ಬಿಟ್ಟು ಕಳುಹಿಸಿದ ಮೇಲೆ, ಯೆರೆಮೀಯನಿಗೆ ಯೆಹೋವ ದೇವರಿಂದ ವಾಕ್ಯವು ಬಂದಿತು.</verse>
				<verse number="2">ಕಾವಲಿನವರ ಅಧಿಪತಿಯು ಯೆರೆಮೀಯನನ್ನು ಕರೆಯಿಸಿ, ಅವನಿಗೆ ಹೇಳಿದ್ದೇನೆಂದರೆ, “ನಿನ್ನ ದೇವರಾದ ಯೆಹೋವ ದೇವರು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾರೆ. ಹೇಳಿದ ಪ್ರಕಾರವೇ ಯೆಹೋವ ದೇವರು ಅದನ್ನು ಬರಮಾಡಿದ್ದಾನೆ.</verse>
				<verse number="3">ನೀವು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಆತನ ಮಾತುಗಳನ್ನು ಕೇಳದೆ ಹೋದದ್ದರಿಂದಲೇ ಈ ಕಾರ್ಯವು ನಿಮಗೆ ಸಂಭವಿಸಿದೆ.</verse>
				<verse number="4">ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಒಳ್ಳೆಯದೆಂದು ತೋಚಿದರೆ ಬಾ, ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ, ದೇಶವೆಲ್ಲಾ ನಿನ್ನ ಮುಂದೆ ಇದೆ; ಎಲ್ಲಿ ಹೋಗುವುದಕ್ಕೆ ನಿನಗೆ ಒಳ್ಳೆಯದೆಂದೂ, ಸರಿಯೆಂದೂ ಕಾಣುತ್ತದೋ, ಅಲ್ಲಿಗೆ ಹೋಗು,” ಎಂಬುದು.</verse>
				<verse number="5">ಯೆರೆಮೀಯನು ಇನ್ನು ಹಿಂದಿರುಗದೆ ಇರುವಾಗ, ನೆಬೂಜರದಾನನು ಹೇಳಿದ್ದೇನೆಂದರೆ: “ಬಾಬಿಲೋನಿನ ಅರಸನು ಯೆಹೂದದ ಪಟ್ಟಣಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನ ಬಳಿಗೆ ತಿರುಗಿಕೋ; ಅವನ ಸಂಗಡ ಜನರೊಳಗೆ ವಾಸಮಾಡು. ಇಲ್ಲವೆ ಎಲ್ಲಿ ಹೋಗುವುದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ, ಅಲ್ಲಿಗೆ ಹೋಗು,” ಎಂದು ಹೇಳಿ, ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ, ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು.</verse>
				<verse number="6">ಯೆರೆಮೀಯನು ಅಹೀಕಾಮನ ಮಗ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ, ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.</verse>
				<verse number="7">ಬಾಬಿಲೋನಿನ ಅರಸನು ಅಹೀಕಾಮನ ಮಗ ಗೆದಲ್ಯನನ್ನು ರಾಜ್ಯಪಾಲನಾಗಿ ಮಾಡಿದ್ದಾನೆಂಬ ಸುದ್ದಿಯನ್ನು ಮತ್ತು ಬಾಬಿಲೋನಿಗೆ ಸೆರೆಹೋಗದೆ ಇದ್ದ ದೇಶಿಯರಲ್ಲಿ ಬಡವರಾದ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದ್ದಾನೆಂಬ ಸುದ್ದಿಯನ್ನು ಉಳಿದಿದ್ದ ಯೆಹೂದ ಸೇನಾಧಿಪತಿಗಳೂ ಅವರ ಜನರೂ ಕೇಳಿದಾಗ,</verse>
				<verse number="8">ನೆತನ್ಯನ ಮಗ ಇಷ್ಮಾಯೇಲನೂ; ಕಾರೇಹನ ಮಗ ಯೋಹಾನಾನ್, ಯೋನಾತಾನ್; ತನ್ಹುಮೆತನ ಮಗ ಸೆರಾಯ್; ನೆಟೋಫದವನಾದ ಏಫಯನ ಪುತ್ರರೂ; ಮಾಕಾತ್ಯರಲ್ಲಿ ಒಬ್ಬನ ಮಗ ಯಾಜನ್ಯ; ಇವರೆಲ್ಲರೂ ತಮ್ಮ ಜನರಸಹಿತವಾಗಿ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು.</verse>
				<verse number="9">ಆಗ ಶಾಫಾನನ ಮಗ ಅಹೀಕಾಮನ ಮಗ ಗೆದಲ್ಯನು ಅವರಿಗೂ, ಅವರ ಜನರಿಗೂ ಪ್ರಮಾಣಮಾಡಿ, “ ‘ಬಾಬಿಲೋನಿಯರಿಗೆ ಸೇವೆ ಮಾಡುವುದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು, ಬಾಬಿಲೋನಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೆಯದಾಗುವುದು,’ ಎಂದನು.</verse>
				<verse number="10">ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಬಾಬಿಲೋನಿಯರ ಹತ್ತಿರ ಕಾದುಕೊಳ್ಳುವುದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು. ಆದರೆ ನೀವು ದ್ರಾಕ್ಷಾರಸವನ್ನೂ, ಹಣ್ಣುಗಳನ್ನೂ, ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣಗಳಲ್ಲಿ ವಾಸವಾಗಿರಿ,” ಎಂಬುದು.</verse>
				<verse number="11">ಹಾಗೆಯೇ ಮೋವಾಬಿನಲ್ಲಿಯೂ, ಅಮ್ಮೋನನ ಮಕ್ಕಳಲ್ಲಿಯೂ, ಎದೋಮಿನಲ್ಲಿಯೂ, ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆಲ್ಲರೂ ಬಾಬಿಲೋನಿನ ಅರಸನು ಯೆಹೂದದ ಒಂದು ಶೇಷವನ್ನು ಬಿಟ್ಟಿದ್ದನೆಂದೂ, ಶಾಫಾನನ ಮೊಮ್ಮಗ ಅಹೀಕಾಮನ ಮಗ ಗೆದಲ್ಯನನ್ನು ಅವರಿಗೆ ಅಧಿಪತಿಯನ್ನಾಗಿ ನೇಮಿಸಿದ್ದಾನೆಂದು ಕೇಳಿದಾಗ</verse>
				<verse number="12">ಯೆಹೂದ್ಯರೆಲ್ಲರೂ, ಅವರು ಓಡಿಸಲಾಗಿದ್ದ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು, ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು, ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ, ಬೇಸಿಗೆ ಕಾಲದ ಹಣ್ಣುಗಳನ್ನೂ ಕೂಡಿಸಿದರು.</verse>
				<verse number="13">ಇದಲ್ಲದೆ ಕಾರೇಹನ ಮಗ ಯೋಹಾನಾನನೂ, ಸೀಮೆಯಲ್ಲಿದ್ದ ಎಲ್ಲಾ ಸೇನಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು,</verse>
				<verse number="14">“ಅಮ್ಮೋನನ ಮಕ್ಕಳ ಅರಸನಾದ ಬಾಲೀಸನು ನಿನ್ನನ್ನು ಕೊಲ್ಲುವದಕ್ಕಾಗಿ ನೆತನ್ಯನ ಮಗನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದಿದೆಯೋ?” ಎಂದನು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.</verse>
				<verse number="15">ಆಗ ಕಾರೇಹನ ಮಗ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡ ಮಾತನಾಡಿ, “ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದು ಹಾಕುತ್ತೇನೆ. ಅವನು ನಿನ್ನನ್ನು ಕೊಂದರೆ, ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರು ಚದರಿಹೋಗಿ, ಯೆಹೂದದಲ್ಲಿ ಉಳಿದವರು ನಾಶವಾಗುತ್ತಾರಲ್ಲಾ. ಏಕೆ ಹೀಗೆ ಆಗಬೇಕು?” ಎಂದು ವಿಜ್ಞಾಪಿಸಿದನು.</verse>
				<verse number="16">ಆದರೆ ಅಹೀಕಾಮನ ಮಗ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ, “ಈ ಕೆಲಸ ಮಾಡಬೇಡ, ಏಕೆಂದರೆ ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ,” ಎಂದನು.</verse>
			</chapter>
			<chapter number="41">
				<verse number="1">ಏಳನೆಯ ತಿಂಗಳಲ್ಲಿ ಅರಸನ ಸಂತಾನದವನೂ, ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮೊಮ್ಮಗನೂ, ನೆತನ್ಯನ ಮಗನೂ ಆದ ಇಷ್ಮಾಯೇಲನು ಅವನ ಸಂಗಡ ಹತ್ತು ಮಂದಿಯೂ ಮಿಚ್ಪದಲ್ಲಿದ್ದ ಅಹೀಕಾಮನ ಮಗ ಗೆದಲ್ಯನ ಬಳಿಗೆ ಬಂದರು. ಅವರು ಮಿಚ್ಪದಲ್ಲಿಯೇ ಊಟಮಾಡುತ್ತಿದ್ದಾಗ,</verse>
				<verse number="2">ನೆತನ್ಯನ ಮಗ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಜನರಸಹಿತವಾಗಿ ಎದ್ದು, ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮೊಮ್ಮಗ ಅಹೀಕಾಮನ ಮಗನಾದ ಗೆದಲ್ಯನನ್ನು ಖಡ್ಗದಿಂದ ಹೊಡೆದು ಕೊಂದುಹಾಕಿದನು.</verse>
				<verse number="3">ಇದಲ್ಲದೆ ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಅಲ್ಲಿ ಸಿಕ್ಕಿದ ಯೆಹೂದ್ಯರೆಲ್ಲರನ್ನೂ, ಕಸ್ದೀಯರೆಲ್ಲರನ್ನೂ, ಸೈನಿಕರನ್ನೂ ಇಷ್ಮಾಯೇಲನು ಕೊಂದುಹಾಕಿದನು.</verse>
				<verse number="4">ಅವನು ಗೆದಲ್ಯನನ್ನು ಕೊಂದುಹಾಕಿದ ಎರಡನೆಯ ದಿನದಲ್ಲಿ, ಅದು ಯಾರಿಗೂ ತಿಳಿಯದ ವೇಳೆಯಲ್ಲಿ</verse>
				<verse number="5">ಶೆಕೆಮಿನಿಂದಲೂ ಶೀಲೋವಿನಿಂದಲೂ ಸಮಾರ್ಯದಿಂದಲೂ ಎಂಬತ್ತು ಜನರು ಗಡ್ಡವನ್ನೂ ಕ್ಷೌರ ಮಾಡಿದವರಾಗಿಯೂ ವಸ್ತ್ರಗಳನ್ನು ಹರಿದುಕೊಂಡವರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಯೆಹೋವ ದೇವರ ಆಲಯಕ್ಕೆ ತರುವುದಕ್ಕೋಸ್ಕರ ಕಾಣಿಕೆಯನ್ನೂ, ಧೂಪವನ್ನೂ ಕೈಯಲ್ಲಿ ತೆಗೆದುಕೊಂಡು ಬಂದರು.</verse>
				<verse number="6">ಆಗ ನೆತನ್ಯನ ಮಗ ಇಷ್ಮಾಯೇಲನು ಮಿಚ್ಪದಿಂದ ಹೊರಟು, ಅಳುತ್ತಲೇ ಅವರ ಎದುರಿಗೆ ಹೋದನು. ಅವರನ್ನು ಎದುರುಗೊಂಡ ಮೇಲೆ ಅವರಿಗೆ, “ಅಹೀಕಾಮನ ಮಗ ಗೆದಲ್ಯನ ಬಳಿಗೆ ಬನ್ನಿ,” ಎಂದನು.</verse>
				<verse number="7">ಆಗ ಅವರು ಪಟ್ಟಣದ ಮಧ್ಯಕ್ಕೆ ಬಂದಾಗ, ನೆತನ್ಯನ ಮಗ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು, ಬಾವಿಯೊಳಗೆ ಹಾಕಿಬಿಟ್ಟರು.</verse>
				<verse number="8">ಆದರೆ ಆ ಎಂಬತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಂದು ಹಾಕಬೇಡ. ಏಕೆಂದರೆ ನಮಗೆ ಹೊಲದಲ್ಲಿ ಗೋಧಿ, ಜವೆಗೋಧಿ, ಎಣ್ಣೆ, ಜೇನು ಇವುಗಳನ್ನು ಬಚ್ಚಿಟ್ಟಿದ್ದೇವೆ” ಎಂದು ಬಿನ್ನವಿಸಿದರು. ಆದ್ದರಿಂದ ಅವನು ಹಿಂದೆಗೆದು ಅವರನ್ನು, ಅವರ ಸಹೋದರರ ಮಧ್ಯದಲ್ಲಿ ಕೊಂದುಹಾಕಲಿಲ್ಲ.</verse>
				<verse number="9">ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದುಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಬಾವಿಯು, ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ತೋಡಿಸಿದ್ದ ಬಾವಿಯೇ ಆಗಿತ್ತು. ಇದನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದು ಹಾಕಿದವರಿಂದ ತುಂಬಿಸಿದನು.</verse>
				<verse number="10">ಇಷ್ಮಾಯೇಲನು ಮಿಚ್ಪದಲ್ಲಿದ್ದ ಜನರ ಉಳಿದವರನ್ನೆಲ್ಲಾ ಅರಸನ ಪುತ್ರಿಯರನ್ನೂ, ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟು, ಉಳಿದ ಜನರೆಲ್ಲರನ್ನು ಸೆರೆಯಾಗಿ ಒಯ್ದನು. ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು, ಅಮ್ಮೋನ್ಯರ ಬಳಿಗೆ ದಾಟಿಹೋಗುವುದಕ್ಕೆ ಹೊರಟನು.</verse>
				<verse number="11">ಆದರೆ ಕಾರೇಹನ ಮಗ ಯೋಹಾನಾನನೂ, ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ್ದ ಕೇಡನ್ನೆಲ್ಲಾ ಕೇಳಿದ ಮೇಲೆ,</verse>
				<verse number="12">ಆ ಮನುಷ್ಯರನ್ನೆಲ್ಲಾ ಕರೆದುಕೊಂಡು ನೆತನ್ಯನ ಮಗ ಇಷ್ಮಾಯೇಲನ ಸಂಗಡ ಯುದ್ಧಮಾಡುವುದಕ್ಕೆ ಹೋಗಿ, ಗಿಬ್ಯೋನಿನಲ್ಲಿರುವ ದೊಡ್ಡ ಕೆರೆಯ ಬಳಿಯಲ್ಲಿ ಅವನನ್ನು ಕಂಡರು.</verse>
				<verse number="13">ಆಗ ಇಷ್ಮಾಯೇಲನ ಸಂಗಡ ಇದ್ದ ಜನರೆಲ್ಲರೂ, ಕಾರೇಹನ ಮಗ ಯೋಹಾನಾನನನ್ನೂ, ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರನ್ನೂ ನೋಡಿದಾಗ, ಸಂತೋಷಪಟ್ಟರು.</verse>
				<verse number="14">ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರು ಸುತ್ತಿಕೊಂಡು ತಿರುಗಿಕೊಂಡು, ಕಾರೇಹನ ಮಗನಾದ ಯೋಹಾನಾನನ ಬಳಿಗೆ ಬಂದರು.</verse>
				<verse number="15">ಆದರೆ ನೆತನ್ಯನ ಮಗನಾದ ಇಷ್ಮಾಯೇಲನು ಎಂಟು ಜನರ ಸಂಗಡ ಯೋಹಾನಾನನಿಗೆ ತಪ್ಪಿಸಿಕೊಂಡು, ಅಮ್ಮೋನ್ಯರ ಬಳಿಗೆ ಹೋದನು.</verse>
				<verse number="16">ಆಗ ಕಾರೇಹನ ಮಗನಾದ ಯೋಹಾನಾನನೂ, ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗ ಗೆದಲ್ಯನನ್ನು ಕೊಂದುಹಾಕಿದ ತರುವಾಯ, ತಪ್ಪಿಸಿಬಿಟ್ಟಿದ್ದ ಉಳಿದ ಜನರೆಲ್ಲರನ್ನು ಎಂದರೆ, ಗಿಬ್ಯೋನನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಕಂಚುಕಿಯರನ್ನೂ ಮಿಚ್ಪದಿಂದ ಕರೆದುಕೊಂಡು ಹೊರಟು,</verse>
				<verse number="17">ಈಜಿಪ್ಟಿಗೆ ಹೋಗುವುದಕ್ಕೆ ಬೇತ್ಲೆಹೇಮಿನ ಬಳಿಯಲ್ಲಿರುವ ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು.</verse>
				<verse number="18">ಬಾಬಿಲೋನಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗ ಗೆದಲ್ಯನನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದುಹಾಕಿದ್ದರಿಂದಲೇ, ಅವರಿಗೆ ಭಯಪಟ್ಟರು.</verse>
			</chapter>
			<chapter number="42">
				<verse number="1">ಆಗ ಸೈನ್ಯಾಧಿಪತಿಗಳೆಲ್ಲರೂ ಕಾರೇಹನ ಮಗನಾದ ಯೋಹಾನಾನನೂ, ಹೋಷಾಯನ ಮಗನಾದ ಎಜನೀಯನೂ, ಕಿರಿಯರು ಮೊದಲುಗೊಂಡು ಹಿರಿಯರವರೆಗೆ ಜನರೆಲ್ಲರು ಹತ್ತಿರ ಬಂದು,</verse>
				<verse number="2">ಪ್ರವಾದಿಯಾದ ಯೆರೆಮೀಯನಿಗೆ, “ನಮ್ಮ ವಿಜ್ಞಾಪನೆ ನಿಮ್ಮ ಮುಂದೆ ಬರಲಿ. ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ, ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ? ನಮಗೋಸ್ಕರವೂ ಎಂದರೆ ಈ ಸಮಸ್ತ ಶೇಷಕ್ಕೋಸ್ಕರವೂ,</verse>
				<verse number="3">ನಾವು ನಡೆಯತಕ್ಕ ಮಾರ್ಗವನ್ನೂ, ನಾವು ಮಾಡತಕ್ಕ ಕಾರ್ಯವನ್ನೂ ನಿನ್ನ ದೇವರಾದ ಯೆಹೋವ ದೇವರು ನಮಗೆ ತಿಳಿಸುವ ಹಾಗೆ, ನಿನ್ನ ದೇವರಾದ ಯೆಹೋವ ದೇವರಿಗೆ ಪ್ರಾರ್ಥನೆ ಮಾಡು,” ಎಂದರು.</verse>
				<verse number="4">ಆಗ ಪ್ರವಾದಿಯಾದ ಯೆರೆಮೀಯನು ಅವರಿಗೆ, “ನಾನು ಕೇಳಿದ್ದೇನೆ, ನಿಮ್ಮ ಮಾತುಗಳ ಪ್ರಕಾರ ನಿಮ್ಮ ದೇವರಾದ ಯೆಹೋವ ದೇವರಿಗೆ ಪ್ರಾರ್ಥನೆ ಮಾಡುತ್ತೇನೆ. ಯೆಹೋವ ದೇವರು ನಿಮಗೆ ಯಾವ ಉತ್ತರವನ್ನು ಕೊಡುವರೋ, ಅದನ್ನು ನಿಮಗೆ ತಿಳಿಸುವೆನು. ಒಂದು ಮಾತನ್ನಾದರೂ ನಿಮ್ಮಿಂದ ಹಿಂದೆಗೆಯುವುದಿಲ್ಲ,” ಎಂದು ಹೇಳಿದನು.</verse>
				<verse number="5">ಆಗ ಅವರು ಯೆರೆಮೀಯನಿಗೆ, “ನಿನ್ನ ದೇವರಾದ ಯೆಹೋವ ದೇವರು ನಿನ್ನನ್ನು ಯಾವ ವಿಷಯದಲ್ಲಿ ನಮ್ಮ ಬಳಿಗೆ ಕಳುಹಿಸುತ್ತಾರೋ, ಆ ಎಲ್ಲಾ ಮಾತುಗಳ ಪ್ರಕಾರ ನಾವು ಮಾಡದೆ ಹೋದರೆ, ಯೆಹೋವ ದೇವರು ನಮಗೆ ಸತ್ಯವಾದ ನಂಬಿಕೆಯುಳ್ಳ ಸಾಕ್ಷಿಯಾಗಿರಲಿ. ನಾವು ನಮ್ಮ ದೇವರಾದ ಯೆಹೋವ ದೇವರ ಸ್ವರವನ್ನು ಕೇಳುವಾಗ, ನಮಗೆ ಒಳ್ಳೆಯದಾಗುವ ಹಾಗೆ,</verse>
				<verse number="6">ನಾವು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇವೋ, ಆ ನಮ್ಮ ದೇವರಾದ ಯೆಹೋವ ದೇವರ ಮಾತನ್ನು ಅದು ಹಿತವಾದರೂ ಸರಿಯೇ, ಅಹಿತವಾದರೂ ಸರಿಯೇ ಕೇಳುವೆವು,” ಎಂದರು.</verse>
				<verse number="7">ಹತ್ತು ದಿವಸಗಳಾದ ಮೇಲೆ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಬಂತು.</verse>
				<verse number="8">ಆಗ ಕಾರೇಹನ ಮಗ ಯೋಹಾನಾನನನ್ನೂ, ಅವನ ಸಂಗಡ ಇದ್ದ ಸೇನಾಪತಿಗಳೆಲ್ಲರನ್ನೂ, ಕಿರಿಯರು ಮೊದಲುಗೊಂಡು ಹಿರಿಯರೆಲ್ಲರವರೆಗೆ ಜನರೆಲ್ಲರನ್ನೂ ಕರೆದು,</verse>
				<verse number="9">ಅವರಿಗೆ ಹೇಳಿದ್ದೇನೆಂದರೆ, “ಯಾರ ಮುಂದೆ ನಿಮ್ಮ ವಿಜ್ಞಾಪನೆಯನ್ನು ತರುವುದಕ್ಕೆ ನನ್ನನ್ನು ಕಳುಹಿಸಿದ್ದೀರೋ, ಆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ:</verse>
				<verse number="10">‘ನೀವು ಇನ್ನು ಈ ದೇಶದಲ್ಲಿ ವಾಸಮಾಡಿದರೆ, ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತು ಹಾಕದೆ ನೆಡುವೆನು. ಏಕೆಂದರೆ ನಾನು ನಿಮಗೆ ಮಾಡಿರುವ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಡುತ್ತೇನೆ.</verse>
				<verse number="11">ನೀವು ಭಯಪಡುವ ಬಾಬಿಲೋನಿನ ಅರಸನಿಗೆ ಭಯಪಡಬೇಡಿರಿ; ಅವನಿಗೆ ಭಯಪಡಬೇಡಿರೆಂದು ಯೆಹೋವ ದೇವರು ಹೇಳುತ್ತಾರೆ; ಏಕೆಂದರೆ ನಿಮ್ಮನ್ನು ರಕ್ಷಿಸುವುದಕ್ಕೂ, ಅವನ ಕೈಯಿಂದ ನಿಮ್ಮನ್ನು ತಪ್ಪಿಸುವುದಕ್ಕೂ ನಾನು ನಿಮ್ಮ ಸಂಗಡ ಇದ್ದೇನೆ.</verse>
				<verse number="12">ಇದಲ್ಲದೆ ನಾನು ನಿಮಗೆ ಕರುಣೆಯನ್ನು ತೋರಿಸುವೆನು; ಆಗ ಅವನು ನಿಮ್ಮನ್ನು ಕರುಣಿಸಿ, ನಿಮ್ಮನ್ನು ತಿರುಗಿ ನಿಮ್ಮ ಸ್ವದೇಶಕ್ಕೆ ಬರಮಾಡುವನು.’</verse>
				<verse number="13">“ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ‘ನಾವು ಈ ದೇಶದಲ್ಲಿ ವಾಸಮಾಡುವುದಿಲ್ಲ’ ಎಂದು ಹೇಳಿದರೆ,</verse>
				<verse number="14">ನೀವು, ‘ಇಲ್ಲ, ನಾವು ಈಜಿಪ್ಟ್ ದೇಶಕ್ಕೆ ಹೋಗುತ್ತೇವೆ; ಅಲ್ಲಿ ನಾವು ಯುದ್ಧವನ್ನು ನೋಡುವುದಿಲ್ಲ, ತುತೂರಿಯ ಶಬ್ದವನ್ನು ಕೇಳುವುದಿಲ್ಲ, ರೊಟ್ಟಿಯ ವಿಷಯ ಕ್ಷಾಮವಾಗುವುದಿಲ್ಲ.’ ಅಲ್ಲಿ ವಾಸಮಾಡುವೆವೆಂದು ಹೇಳಿದರೆ,</verse>
				<verse number="15">ಯೆಹೂದದ ಶೇಷವೇ, ಹಾಗಾದರೆ ಈಗ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀವು ನಿಶ್ಚಯವಾಗಿ ನಿಮ್ಮ ಮುಖಗಳನ್ನು ಈಜಿಪ್ಟಿಗೆ ಹೋಗುವಹಾಗೆ ಇಟ್ಟರೆ ಮತ್ತು ನೀವು ಅಲ್ಲಿ ತಂಗುವುದಕ್ಕೆ ಹೋದರೆ,</verse>
				<verse number="16">ನೀವು ಭಯಪಡುವ ಖಡ್ಗವು ಈಜಿಪ್ಟ್ ದೇಶದಲ್ಲಿ ನಿಮ್ಮನ್ನು ಹಿಡಿಯುವುದು. ನೀವು ಹೆದರಿಕೊಳ್ಳುವ ಕ್ಷಾಮವು ಈಜಿಪ್ಟ್ ದೇಶಕ್ಕೆ ನಿಮ್ಮನ್ನು ಹಿಂದಟ್ಟುವುದು, ನೀವು ಅಲ್ಲೇ ಸಾಯುವಿರಿ.</verse>
				<verse number="17">ಈಜಿಪ್ಟಿಗೆ ಹೋಗಿ ಅಲ್ಲಿ ವಾಸಿಸುವ ಹಾಗೆ ತಮ್ಮ ಮುಖಗಳನ್ನಿಡುವ ಮನುಷ್ಯರಿಗೆಲ್ಲಾ ಹೀಗಾಗುವುದು. ಅವರು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಸಾಯುವರು. ನಾನು ಅವರ ಮೇಲೆ ಬರಮಾಡುವ ಕೇಡಿಗೆ ತಪ್ಪಿಸಿಕೊಂಡು ಉಳಿಯುವವನು ಒಬ್ಬನೂ ಅವರೊಳಗೆ ಇರುವುದಿಲ್ಲ.’</verse>
				<verse number="18">ಇಸ್ರಾಯೇಲಿನ ದೇವರೂ, ಸರ್ವಶಕ್ತರೂ ಆದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಯೆರೂಸಲೇಮಿನ ಮೇಲೆ ಹೇಗೆ ಸುರಿಯಿತೋ, ಹಾಗೆಯೇ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೇ, ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ಸ್ಥಳವನ್ನು ನೀವು ಮತ್ತೆ ನೋಡಲಾರಿರಿ.’</verse>
				<verse number="19">“ಯೆಹೂದದ ಶೇಷವೇ, ಯೆಹೋವ ದೇವರು ನಿಮ್ಮ ವಿಷಯವಾಗಿ ಹೇಳಿದ್ದೇನೆಂದರೆ: ‘ಈಜಿಪ್ಟಿಗೆ ಹೋಗಬೇಡಿರಿ,’ ಇದನ್ನು ಖಚಿತಪಡಿಸಿಕೊಳ್ಳಿ: ನಾನು ಇಂದು ನಿಮಗೆ ಎಚ್ಚರಿಕೆ ನೀಡುತ್ತೇನೆ.</verse>
				<verse number="20">ನೀವೇ ನನ್ನ ಬಳಿಗೆ ಬಂದು ನಮ್ಮ ದೇವರಾದ ಯೆಹೋವ ದೇವರನ್ನು ನಮಗಾಗಿ ಪ್ರಾರ್ಥಿಸು, ‘ನಮ್ಮ ದೇವರಾದ ಯೆಹೋವ ದೇವರು ಯಾವ ಅಪ್ಪಣೆ ಕೊಡುತ್ತಾರೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು,’ ಎಂದು ಹೇಳಿ ಮಾರಣಾಂತಿಕ ತಪ್ಪನ್ನು ಮಾಡಿದ್ದೀರಿ.</verse>
				<verse number="21">ನಾನು ಈ ಹೊತ್ತು ಅದನ್ನು ನಿಮಗೆ ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಶಬ್ದವನ್ನಾದರೂ ಅವರು ಯಾವುದರ ವಿಷಯವಾಗಿ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೋ ಅದರಲ್ಲಿ ಯಾವುದನ್ನಾದರೂ ಕೇಳಲಿಲ್ಲ.</verse>
				<verse number="22">ಹೀಗಿರುವುದರಿಂದ ನೀವು ವಾಸಿಸುವುದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಸಾಯುವಿರೆಂದು ಈಗ ನಿಶ್ಚಯವಾಗಿ ತಿಳಿದುಕೊಳ್ಳಿರಿ,” ಎಂದನು.</verse>
			</chapter>
			<chapter number="43">
				<verse number="1">ಯೆರೆಮೀಯನು ಜನರೆಲ್ಲರಿಗೆ ಅವರ ದೇವರಾದ ಯೆಹೋವ ದೇವರು ಯಾವ ವಿಷಯವಾಗಿ ಅವನನ್ನು ಅವರ ಬಳಿಗೆ ಕಳುಹಿಸಿದ್ದರೋ, ಆ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದಾಗ,</verse>
				<verse number="2">ಹೋಷಾಯನ ಮಗನಾದ ಅಜರ್ಯನೂ, ಕಾರೇಹನ ಮಗನಾದ ಯೋಹಾನಾನನೂ, ಗರ್ವಿಷ್ಠ ಮನುಷ್ಯರೆಲ್ಲರೂ ಮಾತನಾಡಿ ಯೆರೆಮೀಯನಿಗೆ, “ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾಗಿರುವುದಕ್ಕೆ ಈಜಿಪ್ಟಿಗೆ ಹೋಗಬಾರದೆಂದು ಹೇಳುವುದಕ್ಕೆ ನಮ್ಮ ದೇವರಾದ ಯೆಹೋವ ದೇವರು ನಿನ್ನನ್ನು ಕಳುಹಿಸಲಿಲ್ಲ.</verse>
				<verse number="3">ಆದರೆ ಅವರು ನಮ್ಮನ್ನು ಕೊಂದುಹಾಕುವ ಹಾಗೆಯೂ, ನಮ್ಮನ್ನು ಬಾಬಿಲೋನಿಗೆ ಸೆರೆ ಒಯ್ಯುವ ಹಾಗೆಯೂ, ನಮ್ಮನ್ನು ಬಾಬಿಲೋನಿಯರ ಕೈಯಲ್ಲಿ ಒಪ್ಪಿಸಬೇಕೆಂದು ನೇರೀಯನ ಮಗನಾದ ಬಾರೂಕನು ನಿನ್ನನ್ನು ನಮಗೆ ವಿರೋಧವಾಗಿ ಪ್ರೇರೇಪಿಸಿದ್ದಾನೆ,” ಎಂದರು.</verse>
				<verse number="4">ಈ ಪ್ರಕಾರ ಕಾರೇಹನ ಮಗ ಯೋಹಾನಾನನೂ, ಸೈನ್ಯಾಧಿಪತಿಗಳೆಲ್ಲರೂ, ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ, ಯೆಹೋವ ದೇವರ ಮಾತಿಗೆ ಕಿವಿಗೊಡಲಿಲ್ಲ.</verse>
				<verse number="5">ಆದರೆ ಕಾರೇಹನ ಮಗ ಯೋಹಾನಾನನೂ, ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವುದಕ್ಕೆ ತಿರುಗಿ ಬಂದ ಯೆಹೂದದಲ್ಲಿ ಉಳಿದವರನ್ನು,</verse>
				<verse number="6">ಅಂದರೆ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಅರಸನ ಪುತ್ರಿಯರನ್ನೂ, ಕಾವಲಿನವರ ಅಧಿಪತಿಯಾದ ನೆಬೂಜರದಾನನು ಶಾಫಾನನ ಮೊಮ್ಮಗ ಅಹೀಕಾಮನ ಮಗ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ, ಪ್ರವಾದಿಯಾದ ಯೆರೆಮೀಯನನ್ನೂ, ನೇರೀಯನ ಮಗ ಬಾರೂಕನನ್ನೂ ತೆಗೆದುಕೊಂಡು ಈಜಿಪ್ಟ್ ದೇಶಕ್ಕೆ ಹೋದರು.</verse>
				<verse number="7">ಏಕೆಂದರೆ ಅವರು ಯೆಹೋವ ದೇವರ ಮಾತಿಗೆ ಕಿವಿಗೊಡಲಿಲ್ಲ. ಹೀಗೆ ಅವರು ಈಜಿಪ್ಟಿಗೆ ಹೋಗಿ ತಹಪನೇಸಿಗೆ ಬಂದರು.</verse>
				<verse number="8">ಆಗ ತಹಪನೇಸಿನಲ್ಲಿ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಬಂದಿತು.</verse>
				<verse number="9">“ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತೆಗೆದು ತಹಪನೇಸಿನಲ್ಲಿರುವ ಫರೋಹನ ಮನೆಯ ಪ್ರವೇಶದಲ್ಲಿರುವ ಇಟ್ಟಿಗೆ ಭಟ್ಟಿಯ ಮಣ್ಣಿನಲ್ಲಿ ಯೆಹೂದ್ಯರ ಮುಂದೆ ಬಚ್ಚಿಟ್ಟು, ಅವರಿಗೆ ಹೇಳತಕ್ಕದ್ದೇನೆಂದರೆ:</verse>
				<verse number="10">‘ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ, ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು. ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು.</verse>
				<verse number="11">ಅವನು ಬಂದು ಈಜಿಪ್ಟ್ ದೇಶವನ್ನು ಹೊಡೆದು, ಮರಣಕ್ಕೆ ಇರುವವರನ್ನು ಮರಣಕ್ಕೂ, ಸೆರೆಗೆ ಇರುವವರನ್ನು ಸೆರೆಗೂ, ಖಡ್ಗಕ್ಕೆ ಇರುವವರನ್ನು ಖಡ್ಗಕ್ಕೂ ಒಪ್ಪಿಸುವನು.</verse>
				<verse number="12">ನಾನು ಈಜಿಪ್ಟ್ ದೇವರುಗಳ ಆಲಯಗಳಲ್ಲಿ ಬೆಂಕಿ ಹಚ್ಚುವೆನು. ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು. ಕುರುಬನು ತನ್ನ ಉಡುಪನ್ನು ಹೇನುಗಳಿಂದ ಶುದ್ಧೀಕರಿಸುವಂತೆ ಅವನು ಈಜಿಪ್ಟ್ ದೇಶವನ್ನು ಶುದ್ಧವಾಗಿಸಿಕೊಂಡು ಅಲ್ಲಿಂದ ಸಮಾಧಾನವಾಗಿ ಹೊರಟು ಹೋಗುತ್ತಾನೆ.</verse>
				<verse number="13">ಇದಲ್ಲದೆ ಈಜಿಪ್ಟಿನ ದೇಶದಲ್ಲಿರುವ ಸೂರ್ಯ ದೇವಾಲಯವನ್ನು ಒಡೆದುಹಾಕಿ, ಈಜಿಪ್ಟ್ ದೇವರುಗಳ ಆಲಯಗಳನ್ನು ಬೆಂಕಿಯಿಂದ ಸುಡುವನು.’ ”</verse>
			</chapter>
			<chapter number="44">
				<verse number="1">ಈಜಿಪ್ಟ್ ದೇಶದ ಕೆಳಗಿನ ಪ್ರಾಂತದ ಮಿಗ್ದೋಲ್, ತಹಪನೇಸ್, ಮೆಂಫೀಸ್ ಪಟ್ಟಣಗಳಲ್ಲಿಯೂ ಹಾಗೂ ಈಜಿಪ್ಟನ ದಕ್ಷಿಣ ಭಾಗವಾದ ಪತ್ರೋಸ್ ಪ್ರಾಂತದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆಮೀಯನಿಗೆ ಬಂದ ವಾಕ್ಯವು:</verse>
				<verse number="2">“ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯೆರೂಸಲೇಮಿನ ಮೇಲೆಯೂ, ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ಕಂಡಿದ್ದೀರಿ.</verse>
				<verse number="3">ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ನೀವೂ ನಿಮ್ಮ ಪೂರ್ವಜರೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ, ಧೂಪ ಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ. ಅವುಗಳಲ್ಲಿ ವಾಸಮಾಡುವವನು ಯಾರೂ ಇಲ್ಲ.</verse>
				<verse number="4">ಆದರೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಪುನಃ ಕಳುಹಿಸಿ, ‘ನಾನು ಹಗೆ ಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇಬೇಡಿರಿ!’ ಎಂದು ಹೇಳಿದೆನು.</verse>
				<verse number="5">ಆದರೆ ತಮ್ಮ ಕೆಟ್ಟತನದಿಂದ ತಿರುಗದೆ, ಬೇರೆ ದೇವರುಗಳಿಗೆ ಧೂಪಸುಡುವುದನ್ನು ಬಿಡದೆ ಕೇಳಲಿಲ್ಲ, ನೀವು ಕಿವಿಗೊಡಲಿಲ್ಲ.</verse>
				<verse number="6">ಆದ್ದರಿಂದ ನನ್ನ ರೌದ್ರವೂ ನನ್ನ ಕೋಪವೂ ಸುರಿದು, ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು. ಅವು ಈ ದಿನದವರೆಗೂ ಹಾಳೂ, ಬೀಳೂ ಆದವು.</verse>
				<verse number="7">“ಆದ್ದರಿಂದ ಈಗ ಇಸ್ರಾಯೇಲಿನ ದೇವರೂ, ಸರ್ವಶಕ್ತರಾಗಿರುವ ಯೆಹೋವ ದೇವರೂ ಹೇಳುವುದೇನೆಂದರೆ: ಏಕೆ ನಿಮಗೆ ಉಳಿದಿರುವವರನ್ನು ಮಿಗಿಸದ ಹಾಗೆ ನೀವು ಗಂಡಸರನ್ನೂ, ಹೆಂಗಸರನ್ನೂ, ಮಗುವನ್ನೂ, ಮೊಲೆ ಕೂಸನ್ನೂ ಯೆಹೂದದೊಳಗಿಂದ ಕಡಿದುಬಿಟ್ಟು, ನಿಮ್ಮ ಪ್ರಾಣಗಳಿಗೆ ದೊಡ್ಡ ಕೇಡನ್ನು ಮಾಡಿಕೊಳ್ಳುತ್ತೀರಿ?</verse>
				<verse number="8">ಏಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ, ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ, ನಿಂದೆಯೂ ಆಗುವ ಹಾಗೆಯೂ, ನೀವು ತಂಗುವುದಕ್ಕೆ ಹೋಗಿರುವ ಈಜಿಪ್ಟ್ ದೇಶದಲ್ಲಿ ಬೇರೆ ದೇವರುಗಳಿಗೆ ಧೂಪ ಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?</verse>
				<verse number="9">ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಅವರು ಮಾಡಿದಂಥ, ನಿಮ್ಮ ಪಿತೃಗಳು ಕೆಟ್ಟತನಗಳನ್ನೂ, ಯೆಹೂದದ ಅರಸರ ಕೆಟ್ಟತನಗಳನ್ನೂ, ಅವರ ಹೆಂಡತಿಯರ ಕೆಟ್ಟತನಗಳನ್ನೂ, ನಿಮ್ಮ ಸ್ವಂತ ಕೆಟ್ಟತನಗಳನ್ನೂ, ನಿಮ್ಮ ಹೆಂಡತಿಯರ ಕೆಟ್ಟತನಗಳನ್ನೂ ಮರೆತು ಬಿಟ್ಟಿದ್ದೀರೋ?</verse>
				<verse number="10">ಈ ದಿನದವರೆಗೂ ಅವರು ತಗ್ಗಿಸಿಕೊಳ್ಳಲಿಲ್ಲ, ಭಯಪಡಲಿಲ್ಲ. ನಾನು ನಿಮ್ಮ ಮುಂದೆಯೂ, ನಿಮ್ಮ ತಂದೆಗಳ ಮುಂದೆಯೂ ಇಟ್ಟ ನನ್ನ ನಿಯಮದಲ್ಲಿ ನಡೆಯಲಿಲ್ಲ.</verse>
				<verse number="11">“ಆದ್ದರಿಂದ ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿನ್ನ ಮೇಲೆ ವಿಪತ್ತನ್ನು ಬರಮಾಡಲು ಮತ್ತು ಎಲ್ಲಾ ಯೆಹೂದವನ್ನು ನಾಶಮಾಡಲು ನಿರ್ಧರಿಸಿದ್ದೇನೆ.</verse>
				<verse number="12">ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ಇಟ್ಟಿರುವ ಯೆಹೂದದಲ್ಲಿ ಉಳಿದಿರುವವರನ್ನು ತೆಗೆದುಕೊಳ್ಳುತ್ತೇನೆ. ಅವರೆಲ್ಲರು ಈಜಿಪ್ಟ್ ದೇಶದಲ್ಲಿ ನಾಶವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಅಳಿದುಹೋಗುವರು. ಚಿಕ್ಕವನು ಮೊದಲುಗೊಂಡು ದೊಡ್ಡವನವರೆಗೂ ಖಡ್ಗದಿಂದಲೂ ಕ್ಷಾಮದಿಂದಲೂ ಸಾಯುವರು. ಅಸಹ್ಯವೂ ಭಯವೂ ಶಾಪವೂ ನಿಂದೆಯೂ ಆಗುವುವು.</verse>
				<verse number="13">ನಾನು ಯೆರೂಸಲೇಮನ್ನು ಶಿಕ್ಷಿಸಿದ ಹಾಗೆ ಈಜಿಪ್ಟ್ ದೇಶದಲ್ಲಿ ವಾಸಮಾಡುವವರನ್ನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಶಿಕ್ಷಿಸುವೆನು.</verse>
				<verse number="14">ಈಜಿಪ್ಟ್ ದೇಶಕ್ಕೆ ಅಲ್ಲಿ ವಾಸಿಸುವುದಕ್ಕೆ ಹೋಗಿರುವ ಯೆಹೂದದ ಉಳಿದಿರುವವರು ತಾವು ತಿರುಗಿಕೊಂಡು, ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿದರೂ, ಒಬ್ಬನಾದರೂ ಯೆಹೂದ ದೇಶಕ್ಕೆ ಹಿಂದಿರುಗುವುದಿಲ್ಲ. ಓಡಿಹೋಗುವ ಸ್ವಲ್ಪ ಜನರೇ ಅಲ್ಲದೆ ಇನ್ಯಾರೂ ಹಿಂತಿರುಗುವುದಿಲ್ಲ,” ಎಂಬುದು.</verse>
				<verse number="15">ಆಗ ತಮ್ಮ ಹೆಂಡತಿಯರು ಅನ್ಯ ದೇವತೆಗಳಿಗೆ ಧೂಪ ಹಾಕುತ್ತಿದ್ದರೆಂದು ತಿಳಿದುಕೊಂಡ ಗಂಡಸರು, ಅಲ್ಲಿ ದೊಡ್ಡ ಗುಂಪಾಗಿ ನಿಂತುಕೊಂಡಿದ್ದ ಹೆಂಗಸರು, ಅಂತು ಈಜಿಪ್ಟಿನಲ್ಲೂ ಪತ್ರೋಸಿನಲ್ಲೂ ವಾಸವಾಗಿದ್ದವರೆಲ್ಲರೂ ಯೆರೆಮೀಯನಿಗೆ ಹೀಗೆ ಹೇಳಿದರು:</verse>
				<verse number="16">“ಯೆಹೋವ ದೇವರ ಹೆಸರಿನಿಂದ ನೀನು ನಮಗೆ ನುಡಿದ ಮಾತನ್ನು ಕೇಳಲೊಲ್ಲೆವು.</verse>
				<verse number="17">ಆದರೆ ಸ್ವಂತ ಬಾಯಿಂದ ಹೊರಡುವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ. ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನಾರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ. ನಾವೂ, ನಮ್ಮ ತಂದೆಗಳೂ, ನಮ್ಮ ಅರಸರೂ, ನಮ್ಮ ಪ್ರಧಾನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ಮಾಡುವೆವು. ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ.</verse>
				<verse number="18">ಆದರೆ ನಾವು ಗಗನದ ಒಡತಿಗೆ ಧೂಪ ಸುಡುವುದನ್ನೂ, ಪಾನಾರ್ಪಣೆಗಳನ್ನೂ ಅವಳಿಗೆ ಹೊಯ್ಯುವುದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು. ಖಡ್ಗದಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.”</verse>
				<verse number="19">ಇದಲ್ಲದೆ, “ನಾವು ಗಗನದ ಒಡತಿಗೆ ಧೂಪ ಸುಟ್ಟು, ಅವಳಿಗೆ ಪಾನಾರ್ಪಣೆಗಳನ್ನು ಹೊಯ್ದಾಗ, ನಮ್ಮ ಗಂಡಂದಿರನ್ನು ಬಿಟ್ಟು, ಅವಳ ಪೂಜೆಗೋಸ್ಕರ ದೋಸೆಗಳನ್ನು ಮಾಡಿ, ಅವಳಿಗೆ ಪಾನಾರ್ಪಣೆಗಳನ್ನು ಅರ್ಪಿಸಿದೆವೋ?” ಎಂದರು.</verse>
				<verse number="20">ಆಗ ಯೆರೆಮೀಯನು ಜನರೆಲ್ಲರಿಗೂ, ಗಂಡಸರಿಗೂ, ಹೆಂಗಸರಿಗೂ, ತನಗೆ ಉತ್ತರ ಕೊಟ್ಟಿದ್ದ ಜನರೆಲ್ಲರಿಗೂ ಹೇಳಿದ್ದೇನೆಂದರೆ,</verse>
				<verse number="21">“ನೀವೂ, ನಿಮ್ಮ ಪಿತೃಗಳೂ, ನಿಮ್ಮ ಅರಸರೂ, ನಿಮ್ಮ ಪ್ರಧಾನರೂ, ದೇಶದ ಜನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟ ಧೂಪವನ್ನೇ, ಯೆಹೋವ ದೇವರು ಜ್ಞಾಪಕ ಮಾಡಿಕೊಂಡಿದ್ದು ಅಲ್ಲವೋ?</verse>
				<verse number="22">ಹೀಗೆ ನಿಮ್ಮ ಕೃತ್ಯಗಳ ಕೆಟ್ಟತನವನ್ನೂ, ನೀವು ಮಾಡಿದ ಅಸಹ್ಯಗಳನ್ನೂ ಯೆಹೋವ ದೇವರು ಇನ್ನು ತಾಳಲಾರದ್ದರಿಂದ, ನಿಮ್ಮ ದೇಶವು ಈ ದಿನ ಇರುವ ಪ್ರಕಾರ, ನಿವಾಸಿಗಳಿಲ್ಲದೆ ಹಾಳಾಗಿಯೂ, ವಿಸ್ಮಯವಾಗಿಯೂ, ಶಾಪವಾಗಿಯೂ ಇದೆ.</verse>
				<verse number="23">ನೀವು ಧೂಪ ಸುಟ್ಟು, ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿ, ಯೆಹೋವ ದೇವರ ಮಾತನ್ನು ಕೇಳದೆ, ದೈವನಿಯಮವನ್ನೂ, ದೈವತೀರ್ಪುಗಳನ್ನೂ, ದೈವಷರತ್ತುಗಳನ್ನೂ ಅನುಸರಿಸದೆ, ದೇವರಿಗೆ ವಿಧೇಯರಾಗದೆ ಇದ್ದುದರಿಂದಲೇ, ಈ ಕೇಡು ಈ ದಿನ ನಿಮಗೆ ಸಂಭವಿಸಿದೆ,” ಎಂದನು.</verse>
				<verse number="24">ಇದಲ್ಲದೆ, ಯೆರೆಮೀಯನು ಎಲ್ಲಾ ಜನರಿಗೂ, ಎಲ್ಲಾ ಹೆಂಗಸರಿಗೂ, “ಈಜಿಪ್ಟ್ ದೇಶದಲ್ಲಿರುವ ಯೆಹೂದ್ಯರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ.</verse>
				<verse number="25">ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀವೂ, ನಿಮ್ಮ ಹೆಂಡತಿಯರೂ ಗಗನದ ಒಡತಿಗೆ ಧೂಪ ಸುಡುತ್ತೇವೆಂದೂ, ಅವಳಿಗೆ ಪಾನಾರ್ಪಣೆಗಳನ್ನು ಹೊಯ್ಯುತ್ತೇವೆಂದೂ ನಾವು ಮಾಡಿರುವ ಪ್ರಮಾಣಗಳನ್ನು ನಿಶ್ಚಯವಾಗಿ ನಡೆಸುವೆವೆಂದೂ, ನಿಮ್ಮ ಬಾಯಿಗಳಿಂದ ಹೇಳಿ ನಿಮ್ಮ ಕೈಗಳಿಂದ ಸಹ ಈಡೇರಿಸಿದ್ದೀರಿ.’ “ನಿಮ್ಮ ಪ್ರಮಾಣಗಳನ್ನು ನಿಶ್ಚಯವಾಗಿ ನಡೆಸುವಿರಿ.</verse>
				<verse number="26">ಆದರೆ, ಈಜಿಪ್ಟ್ ದೇಶದಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರೂ ಯೆಹೋವ ದೇವರ ವಾಕ್ಯವನ್ನು ಕೇಳಿರಿ: ‘ಇಗೋ, ನಾನು ನನ್ನ ಸ್ವಂತ ಹೆಸರಿನಿಂದ ಪ್ರಮಾಣ ಮಾಡಿದ್ದೇನೆ,’ ಎಂದು ಯೆಹೋವ ದೇವರು ಹೇಳುತ್ತಾರೆ, ‘ಈಜಿಪ್ಟ್‌ನಲ್ಲಿರುವ ಯಾವುದೇ ಯೆಹೂದದ ವ್ಯಕ್ತಿಯು ಪ್ರಮಾಣ ಮಾಡಲು ನನ್ನ ಶ್ರೇಷ್ಠ ಹೆಸರನ್ನು ಬಳಸಲು ಸಾಧ್ಯವಾಗುವುದಿಲ್ಲ. “ಸಾರ್ವಭೌಮ ಯೆಹೋವ ದೇವರ ಜೀವದಾಣೆ,” ಎಂದು ಮತ್ತೆಂದೂ ಅವರು ಹೇಳುವುದಿಲ್ಲ.</verse>
				<verse number="27">ನಾನು ಒಳ್ಳೆಯದಕ್ಕಾಗಿ ಅಲ್ಲ; ಕೆಟ್ಟದ್ದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು. ಈಜಿಪ್ಟ್ ದೇಶದಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವವರೆಗೆ ಖಡ್ಗದಿಂದಲೂ ಬರದಿಂದಲೂ ನಾಶವಾಗುವರು.</verse>
				<verse number="28">ಆದರೆ ಖಡ್ಗಕ್ಕೆ ತಪ್ಪಿಸಿಕೊಂಡ ಸ್ವಲ್ಪ ಜನರು ಈಜಿಪ್ಟ್ ದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂದಿರುಗಿ ಹೋಗುವರು. ಆಗ ಈಜಿಪ್ಟ್ ದೇಶದಲ್ಲಿ ತಂಗುವುದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವುದೋ, ಅವರ ಮಾತು ನಿಲ್ಲುವುದೋ ಎಂಬುದನ್ನು ತಿಳಿದುಕೊಳ್ಳುವರು.</verse>
				<verse number="29">“ ‘ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವುವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನೆಂಬುದಕ್ಕೆ ಇದೇ ನಿಮಗೆ ಗುರುತು,’ ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="30">ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ಯೆಹೂದದ ಅರಸನಾದ ಚಿದ್ಕೀಯನನ್ನು ಅವನ ಶತ್ರುವಾದಂಥ ಅವನ ಪ್ರಾಣವನ್ನು ಹುಡುಕಿದಂಥ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿ ಹೇಗೆ ಒಪ್ಪಿಸಿದೆನೋ, ಹಾಗೆಯೇ ಈಜಿಪ್ಟಿನ ಅರಸನಾದ ಫರೋಹ ಹೋಫ್ರನನ್ನು ಅವನ ಪ್ರಾಣವನ್ನು ಹುಡುಕುವ ಅವನ ಶತ್ರುಗಳ ಕೈಯಲ್ಲಿ ಒಪ್ಪಿಸುತ್ತೇನೆ.’ ”</verse>
			</chapter>
			<chapter number="45">
				<verse number="1">ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ, ಸುರುಳಿಯಲ್ಲಿ ಬರೆದ ಮೇಲೆ ಪ್ರವಾದಿಯಾದ ಯೆರೆಮೀಯನು ಅವನಿಗೆ ಹೇಳಿದ ವಾಕ್ಯವೇನೆಂದರೆ,</verse>
				<verse number="2">“ಬಾರೂಕನೇ, ಇಸ್ರಾಯೇಲಿನ ದೇವರಾದ ಯೆಹೋವ ದೇವರು ನಿನ್ನನ್ನು ಕುರಿತು ಹೀಗೆ ಹೇಳುತ್ತಾರೆ.</verse>
				<verse number="3">‘ಈಗ ನನಗೆ ಕಷ್ಟ! ಏಕೆಂದರೆ, ಯೆಹೋವ ದೇವರು ನನ್ನ ನೋವಿಗೆ ಚಿಂತೆಯನ್ನು ಕೂಡಿಸಿದ್ದಾರೆ. ನಿಟ್ಟುಸಿರು ಬಿಡುವುದರಿಂದ ದಣಿದಿದ್ದೇನೆ. ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿಯಲ್ಲಾ.’</verse>
				<verse number="4">ಆದರೆ ನಿಮಗೆ ಹೇಳಲು ಯೆಹೋವ ದೇವರು ನನಗೆ ಹೇಳಿದ್ದಾರೆ. ‘ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಕಟ್ಟಿದ್ದನ್ನು ಕೆಡವಿಬಿಡುತ್ತೇನೆ; ನಾನು ನೆಟ್ಟದ್ದನ್ನು ಕಿತ್ತು ಹಾಕುತ್ತೇನೆ. ಹೌದು, ಈ ಸಮಸ್ತ ದೇಶವನ್ನೇ ನಾಶಮಾಡುತ್ತೇನೆ.</verse>
				<verse number="5">ಹಾಗಾದರೆ ನೀನು ನಿನಗೋಸ್ಕರ ದೊಡ್ಡವುಗಳನ್ನು ಹುಡುಕುತ್ತೀಯೋ? ಹುಡುಕಬೇಡ. ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಯೆಹೋವ ದೇವರು ಹೇಳುತ್ತಾರೆ. ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನೀನು ಉಳಿಸಿಕೊಳ್ಳುವಂತೆ ಮಾಡುವೆನು, ಎಂದು ನಿನಗೆ ಹೇಳಿದ್ದಾರೆ,’ ಎಂದನು.”</verse>
			</chapter>
			<chapter number="46">
				<verse number="1">ಇತರ ಜನಾಂಗಗಳಿಗೆ ವಿರೋಧವಾಗಿ ಪ್ರವಾದಿಯಾದ ಯೆರೆಮೀಯನಿಗೆ ಬಂದ ಯೆಹೋವ ದೇವರ ವಾಕ್ಯವು:</verse>
				<verse number="2">ಈಜಿಪ್ಟನ್ನು ಕುರಿತದ್ದು: ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ, ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೇಟೀಸ್ ನದಿಯ ಬಳಿಯಿರುವ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು, ಆ ಸೈನ್ಯದ ಮೇಲೆ ದಾಳಿಮಾಡಿದ್ದರ ವಿಷಯ:</verse>
				<verse number="3">“ಗುರಾಣಿಯನ್ನೂ, ಖೇಡ್ಯವನ್ನೂ ಸಿದ್ಧಮಾಡಿರಿ; ಯುದ್ಧಕ್ಕೆ ಸಮೀಪಿಸಿರಿ;</verse>
				<verse number="4">ರಾಹುತರೇ, ಕುದುರೆಗಳನ್ನು ಕಟ್ಟಿರಿ; ವಾಹನಾಶ್ವಗಳನ್ನು ಹತ್ತಿರಿ. ಎದ್ದು ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಂತುಕೊಳ್ಳಿರಿ; ಈಟಿಗಳನ್ನು ಮೆರುಗು ಮಾಡಿರಿ; ಕವಚಗಳನ್ನು ತೊಟ್ಟುಕೊಳ್ಳಿರಿ.</verse>
				<verse number="5">ಆಹಾ, ನಾನು ಕಂಡದ್ದೇನು? ಅವರು ದಿಗಿಲುಪಟ್ಟು ಹಿಂದಿರುಗಿದ್ದನ್ನು, ಅವರ ಪರಾಕ್ರಮಶಾಲಿಗಳು ಪೆಟ್ಟುತಿಂದಿದ್ದಾರೆ. ಹಿಂದೆ ನೋಡದೆ ಓಡಿಹೋಗುತ್ತಾರೆ, ಏಕೆಂದರೆ ಸುತ್ತಲು ದಿಗಿಲು ಕವಿದಿದೆ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="6">“ವೇಗಶಾಲಿಗಳು ಓಡಿ ಹೋಗದಿರಲಿ; ಪರಾಕ್ರಮಶಾಲಿಯು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್ ನದಿಯ ತೀರದಲ್ಲಿ ಅವರು ಎಡವಿಬೀಳುವರು.</verse>
				<verse number="7">“ನೈಲ್ ನದಿಯಂತೆ ಕದಲುವ ನೀರುಗಳಂತಿದ್ದು ಪ್ರಳಯದ ಹಾಗೆ ಬರುವವನು ಯಾರು?</verse>
				<verse number="8">ಈಜಿಪ್ಟ್ ನೈಲ್ ನದಿಯ ಪ್ರಳಯದ ಹಾಗೆ ಏರುತ್ತದೆ; ಅದರ ನೀರು ನದಿಗಳ ಹಾಗೆ ಕದಲುತ್ತವೆ; ‘ನಾನು ಏರುತ್ತೇನೆ, ಭೂಮಿಯನ್ನು ಮುಚ್ಚುತ್ತೇನೆ; ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ನಾಶಮಾಡುತ್ತೇನೆ,’ ಎಂದು ಅವಳು ಹೇಳುತ್ತಾಳೆ.</verse>
				<verse number="9">ಕುದುರೆಗಳೇ ಬನ್ನಿರಿ; ಸಾರಥಿಗಳೇ ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ, ಪೂಟ್ಯರೂ, ಬಿಲ್ಲನ್ನು ಹಿಡಿದು ಬಗ್ಗಿಸುವ ಲೂದ್ಯರೂ ಹೊರಗೆ ಬರಲಿ.</verse>
				<verse number="10">ಏಕೆಂದರೆ ಇದು ಸೇನಾಧೀಶ್ವರ ಯೆಹೋವನಾದ ದೇವರ ದಿವಸವೇ. ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು, ಖಡ್ಗವು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವುದು. ಏಕೆಂದರೆ ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೇನಾಧೀಶ್ವರ ಯೆಹೋವರಾದ ದೇವರಿಗೆ ಬಲಿ ಆಗುತ್ತದೆ.</verse>
				<verse number="11">“ಈಜಿಪ್ಟಿನ ಮಗಳಾದ ಕನ್ನಿಕೆಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತೆಗೆದುಕೋ. ನೀನು ಬಹಳ ಔಷಧವನ್ನು ತೆಗೆದುಕೊಳ್ಳುವುದು ವ್ಯರ್ಥವಾಗಿದೆ. ಏಕೆಂದರೆ ನಿನಗೆ ಗುಣವಾಗುವುದಿಲ್ಲ!</verse>
				<verse number="12">ಜನಾಂಗಗಳು ನಿನ್ನ ಮಾನಭಂಗವನ್ನು ಕುರಿತು ಕೇಳಿವೆ; ನಿನ್ನ ಕೂಗು ದೇಶವನ್ನು ತುಂಬಿಸಿದೆ. ಏಕೆಂದರೆ ಪರಾಕ್ರಮಶಾಲಿಯು ಪರಾಕ್ರಮಶಾಲಿಯ ಮೇಲೆ ವಿರೋಧವಾಗಿ ಎಡವಿದ್ದಾರೆ. ಇಬ್ಬರೂ ಬಿದ್ದು ಹೋಗಿದ್ದಾರೆ.”</verse>
				<verse number="13">ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಬಂದು ಈಜಿಪ್ಟ್ ದೇಶವನ್ನು ಹೇಗೆ ಹೊಡೆಯುವನೆಂಬುದರ ವಿಷಯವಾಗಿ ಯೆಹೋವ ದೇವರು ಪ್ರವಾದಿಯಾದ ಯೆರೆಮೀಯನಿಗೆ ಹೇಳಿದ ವಾಕ್ಯವು:</verse>
				<verse number="14">“ಈಜಿಪ್ಟಿನಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿಸಿ, ನೋಫಿನಲ್ಲಿಯೂ, ತಹಪನೇಸಿನಲ್ಲಿಯೂ ಪ್ರಕಟಿಸಿ, ‘ನಿಮ್ಮ ಸ್ಥಾನಗಳನ್ನು ತೆಗೆದುಕೊಳ್ಳಿ ಮತ್ತು ಸಿದ್ಧರಾಗಿ, ಏಕೆಂದರೆ ಖಡ್ಗವು ನಿನ್ನ ಸುತ್ತಲೂ ಸಂಹರಿಸುವುದು,’ ಎಂದು ಹೇಳಿರಿ.</verse>
				<verse number="15">ನಿನ್ನ ಬಲಿಷ್ಠರು ಏಕೆ ಬಡಕೊಂಡು ಹೋಗಿದ್ದಾರೆ? ಯೆಹೋವ ದೇವರು ಅವರನ್ನು ಓಡಿಸಿದ್ದರಿಂದ ಅವರು ನಿಲ್ಲಲಿಲ್ಲ.</verse>
				<verse number="16">ಅವರು ಪದೇಪದೇ ಎಡವುತ್ತಾರೆ. ಹೌದು, ಒಬ್ಬರ ಮೇಲೊಬ್ಬರು ಬಿದ್ದರು. ‘ಅವರು ಉಪದ್ರವ ಪಡಿಸುವವರ ಖಡ್ಗವನ್ನು ಬಿಟ್ಟು, ಸ್ವಂತ ಜನರ ಬಳಿಗೂ, ನಾವು ಹುಟ್ಟಿದ ದೇಶದ ಬಳಿಗೂ ತಿರುಗಿ ಹೋಗೋಣ,’ ಎಂದು ಹೇಳಿದರು.</verse>
				<verse number="17">ಈಜಿಪ್ಟಿನ ಅರಸನಾದ ಫರೋಹನು ನಾಶವಾದನು; ಸಮಯವನ್ನು ತಪ್ಪಿಸಿದ್ದಾನೆಂದು ಅಲ್ಲಿ ಕೂಗುತ್ತಾರೆ.</verse>
				<verse number="18">“ಸೇನಾಧೀಶ್ವರ ಯೆಹೋವ ದೇವರೆಂದು ಹೆಸರುಳ್ಳ ಅರಸನು ಹೇಳುವುದೇನೆಂದರೆ, ‘ನನ್ನ ಜೀವದಾಣೆ,’ ಬೆಟ್ಟಗಳಲ್ಲಿ ತಾಬೋರಿನಂತೆಯೂ, ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯವಾಗಿ ಬರುವನು.</verse>
				<verse number="19">ಈಜಿಪ್ಟಿನ ಯುವತಿಯಾದ ನಿವಾಸಿಯೇ, ಸೆರೆಯ ಸಾಮಾನುಗಳನ್ನು ಸಜ್ಜುಗೊಳಿಸಿಕೋ; ಏಕೆಂದರೆ ನೋಫ್ ಪಟ್ಟಣವು ಹಾಳಾಗುವುದು; ನಿವಾಸಿಗಳಿಲ್ಲದ ಬೀಡಾಗುವುದು.</verse>
				<verse number="20">“ಈಜಿಪ್ಟ್ ದೇಶವು ಬಹಳ ಅಂದವಾದ ಕಡಸಾಗಿದೆ; ಆದರೆ ಉತ್ತರದಿಂದ ತೊಣಚೆಯು ಬಂದೇ ಬರುತ್ತದೆ.</verse>
				<verse number="21">ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಕರುಗಳಂತಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಏಕೆಂದರೆ ಅವರ ಆಪತ್ತಿನ ದಿವಸವೂ, ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು.</verse>
				<verse number="22">ಅದರ ಶಬ್ದವು ಸರ್ಪದಂತೆ ಹೊರಡುವುದು; ಏಕೆಂದರೆ ಅವರು ದಂಡಿನ ಸಂಗಡ ಸಂಚರಿಸಿ, ಕಟ್ಟಿಗೆ ಕಡಿಯುವವರ ಹಾಗೆ ಕೊಡಲಿಗಳ ಸಂಗಡ ಅದಕ್ಕೆ ವಿರೋಧವಾಗಿ ಬರುವರು.</verse>
				<verse number="23">ಆದರೆ ಅಡವಿಯನ್ನು ಅದು ಶೋಧಿಸಕೂಡದ್ದಾಗಿದ್ದರೂ, ಕಡಿದುಹಾಕುವರು,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ಅವರು ಮಿಡತೆಗಳಿಗಿಂತ ಹೆಚ್ಚಾಗಿ ಲೆಕ್ಕವಿಲ್ಲದೆ ಇದ್ದಾರೆ.</verse>
				<verse number="24">ಈಜಿಪ್ಟಿನ ಮಗಳು ನಾಚಿಕೆಪಡುವಳು. ಉತ್ತರದ ಜನರ ಕೈಗೆ ಸಿಕ್ಕಿಬೀಳುವಳು.”</verse>
				<verse number="25">ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ನಾನು ತೆಬೆಸ್ ನಗರದಲ್ಲಿನ ಆಮೋನ್ ದೇವತೆಯನ್ನೂ, ಫರೋಹನನ್ನೂ, ಈಜಿಪ್ಟನ್ನೂ, ಅದರ ದೇವರುಗಳನ್ನೂ, ಅದರ ಅರಸರನ್ನೂ, ಅಂತೂ ಫರೋಹನನ್ನೂ, ಅವನಲ್ಲಿ ನಂಬಿಕೆ ಇಡುವ ಎಲ್ಲರನ್ನೂ ದಂಡಿಸುವೆನು.</verse>
				<verse number="26">ಅವರ ಪ್ರಾಣವನ್ನೂ ಹುಡುಕುವವರ ಕೈಯಲ್ಲಿಯೂ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ, ಅವನ ಸೇವಕರ ಕೈಯಲ್ಲಿಯೂ ಅವರನ್ನು ನಾನು ಒಪ್ಪಿಸಿಬಿಡುವೆನು. ಅದರ ತರುವಾಯ ಅದು ಪೂರ್ವದ ಕಾಲಗಳಂತೆ ನಿವಾಸವಾಗುವುದೆಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="27">“ಆದರೆ ನೀನು, ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡಬೇಡ; ಇಸ್ರಾಯೇಲೇ, ದಿಗ್ಭ್ರಮೆಗೊಳ್ಳಬೇಡ; ಏಕೆಂದರೆ ಇಗೋ, ನಾನು ನಿನ್ನನ್ನು ದೂರದಿಂದಲೂ, ನಿನ್ನ ಸಂತಾನವನ್ನು ಅವರು ಸೆರೆಯಾಗಿ ಹೋದ ದೇಶದಿಂದಲೂ ರಕ್ಷಿಸುವೆನು; ಅವನನ್ನು ಭಯಪಡಿಸುವುದಕ್ಕೆ ಯಾರು ಇರುವುದಿಲ್ಲ.</verse>
				<verse number="28">ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡಬೇಡ,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿ ಓಡಿಸಿದೆನೋ, ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ಮುಗಿಸಿಬಿಡುತ್ತೇನೆ; ಆದರೆ ನಿನ್ನನ್ನು ಸಂಪೂರ್ಣವಾಗಿ ಮುಗಿಸಿಬಿಡುವುದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದರೂ ನಿನ್ನನ್ನು ಶಿಕ್ಷಿಸದೆ ಬಿಡುವುದಿಲ್ಲ.”</verse>
			</chapter>
			<chapter number="47">
				<verse number="1">ಫರೋಹನು ಗಾಜಾ ಪಟ್ಟಣವನ್ನು ಮುತ್ತಿಗೆ ಹಾಕುವ ಮೊದಲು, ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆಮೀಯನಿಗೆ ಬಂದ ಯೆಹೋವ ದೇವರ ವಾಕ್ಯವು:</verse>
				<verse number="2">ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪ್ರವಾಹಗಳು ಉತ್ತರದಿಂದ ಬರುತ್ತವೆ, ಅದು ತುಂಬಿ ತುಳುಕುವ ಪ್ರಳಯವಾಗುವುದು; ದೇಶವನ್ನೂ ಅದರಲ್ಲಿರುವ ಸಮಸ್ತ ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ಆಕ್ರಮಿಸುವುವು; ಆಗ ಮನುಷ್ಯರು ಕೂಗುವರು; ದೇಶದ ನಿವಾಸಿಗಳೆಲ್ಲರು ಗೋಳಾಡುವರು.</verse>
				<verse number="3">ಅವನ ಬಲವಾದ ಕುದುರೆಗಳ ಗೊರಸುಗಳ ತುಳಿಯುವಿಕೆಯ ಶಬ್ದದಿಂದಲೂ ಅವನ ರಥಗಳ ಘೋಷದಿಂದಲೂ ಅವನ ಚಕ್ರಗಳ ಧ್ವನಿಯಿಂದಲೂ ತಂದೆಗಳು ಕೈ ಬಲಹೀನತೆಯಿಂದಾಗಿ ತಮ್ಮ ಮಕ್ಕಳ ಕಡೆಗೆ ಹಿಂದಿರುಗಿ ನೋಡರು.</verse>
				<verse number="4">ಏಕೆಂದರೆ ಫಿಲಿಷ್ಟಿಯರೆಲ್ಲರನ್ನು ಸೂರೆ ಮಾಡುವುದಕ್ಕೂ ಟೈರಿನಿಂದಲೂ ಸೀದೋನಿನಿಂದಲೂ ಉಳಿದವರನ್ನು ಕಡಿದುಬಿಡುವುದಕ್ಕೂ ಆ ದಿವಸ ಬಂತು. ಏಕೆಂದರೆ ಯೆಹೋವ ದೇವರು ಫಿಲಿಷ್ಟಿಯರನ್ನು ಕಫ್ತೋರಿನ ದೇಶದ ಉಳಿದವರನ್ನೂ ಸೂರೆಮಾಡುವನು.</verse>
				<verse number="5">ಗಾಜಾ ಊರು ಬೋಳಿಸಿಕೊಂಡಿದೆ. ಅಷ್ಕೆಲೋನ್ ನಾಶನ ಹೊಂದಿದೆ. ಫಿಲಿಷ್ಟಿಯದ ಬಯಲುಸೀಮೆಯಲ್ಲಿ ಉಳಿದ ಪಟ್ಟಣವೇ ನಿನ್ನನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿ?</verse>
				<verse number="6">“ಅಯ್ಯೋ, ಯೆಹೋವ ದೇವರ ಖಡ್ಗವೇ, ಎಷ್ಟರವರೆಗೆ ವಿಶ್ರಮಿಸಿಕೊಳ್ಳದೇ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ; ವಿಶ್ರಮಿಸಿಕೋ, ಸುಮ್ಮನಿರು.</verse>
				<verse number="7">ಅದು ಹೇಗೆ ಸುಮ್ಮನಿರುವುದು? ಅಷ್ಕೆಲೋನಿಗೆ ವಿರೋಧವಾಗಿ ಮತ್ತು ಸಮುದ್ರ ತೀರಕ್ಕೆ ವಿರೋಧವಾಗಿ ಯೆಹೋವ ದೇವರೇ ಅದಕ್ಕೆ ಆಜ್ಞಾಪಿಸಿದ್ದಾರಲ್ಲಾ? ಅಲ್ಲಿ ಅದನ್ನು ನೇಮಿಸಿದ್ದಾನೆ.”</verse>
			</chapter>
			<chapter number="48">
				<verse number="1">ಮೋವಾಬನ್ನು ಕುರಿತದ್ದು: ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೆಬೋ ಊರಿನವರಿಗೆ ಕಷ್ಟ! ಆ ಊರು ಸೂರೆಯಾಯಿತು; ಕಿರ್ಯಾತಯಿಮು ಶತ್ರುವಿನ ಕೈವಶವಾಗಿ ಅವಮಾನಕ್ಕೆ ಗುರಿಯಾಗಿದೆ; ಬಲವಾದ ಕೋಟೆಯು ಸಹ ಚದರಿ ನಾಚಿಕೆಗೆ ಈಡಾಗಿದೆ.</verse>
				<verse number="2">ಮೋವಾಬಿನ ಸ್ತೋತ್ರ ಇನ್ನು ಮೇಲೆ ಇರುವುದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ರಾಷ್ಟ್ರವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ; ಮದ್ಮೆನೇ, ನೀನು ಸಹ ಸುಮ್ಮನಾಗುವೆ; ಖಡ್ಗವು ನಿನ್ನನ್ನು ಹಿಂದಟ್ಟುವುದು.</verse>
				<verse number="3">ಹೊರೊನಯಿಮಿನಿಂದ ಕೂಗುವ ಸ್ವರವು, ಸೂರೆಯು, ದೊಡ್ಡ ನಾಶವು, ಹೊರಡುವುದು.</verse>
				<verse number="4">ಮೋವಾಬು ನಾಶವಾಯಿತು: ಅದರ ಚಿಕ್ಕವರು ಕೂಗನ್ನು ಕೇಳುವಂತೆ ಮಾಡಿದರು.</verse>
				<verse number="5">ಲೂಹೀತ್ ದಿಣ್ಣೆಯನ್ನು ಅಳುತ್ತಲೇ ಹತ್ತುವರು; ಹೊರೊನಯಿಮಿನ ಇಳಿಜಾರಿನಲ್ಲಿ ಶತ್ರುಗಳು ನಾಶದ ಶಬ್ದವನ್ನು ಕೇಳಿದ್ದಾರೆ.</verse>
				<verse number="6">ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ; ಮರುಭೂಮಿಯಲ್ಲಿರುವ ಒಣ ಗಿಡದ ಹಾಗಿರಿ.</verse>
				<verse number="7">ಏಕೆಂದರೆ ನಿನ್ನ ಕ್ರಿಯೆಗಳಲ್ಲಿಯೂ, ನಿನ್ನ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟಿದ್ದರಿಂದ, ನೀನು ಸಹ ಸೆರೆಯಾಗುವಿ ಮತ್ತು ಕೆಮೋಷನು, ಅವನ ಯಾಜಕರು, ಅವನ ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು.</verse>
				<verse number="8">ಒಂದೊಂದು ಪಟ್ಟಣದ ಮೇಲೆ ವಿನಾಶಕನು ಬರುವನು; ಯೆಹೋವ ದೇವರು ಹೇಳಿದ ಹಾಗೆಯೇ, ಒಂದು ಪಟ್ಟಣವಾದರೂ ತಪ್ಪಿಸಿಕೊಳ್ಳಲಾರದು. ತಗ್ಗೂ ಸಹ ನಾಶವಾಗುವುದು; ಮತ್ತು ಬಯಲು ಹಾಳಾಗುವುದು.</verse>
				<verse number="9">ಹಾರಿಹೋಗುವ ಹಾಗೆ ಮೋವಾಬಿಗೆ ರೆಕ್ಕೆಗಳನ್ನು ಕೊಡಿರಿ; ಏಕೆಂದರೆ ಅದರ ಪಟ್ಟಣಗಳು ಹಾಳಾಗುವುವು; ಅವುಗಳಲ್ಲಿ ನಿವಾಸಿಗಳಿರುವುದಿಲ್ಲ.</verse>
				<verse number="10">“ಯೆಹೋವ ದೇವರು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ರಕ್ತದಿಂದ ತನ್ನ ಖಡ್ಗವನ್ನು ಹಿಂದೆಗೆಯುವವನಿಗೆ ಶಾಪವಾಗಲಿ.</verse>
				<verse number="11">“ಮೋವಾಬು ತನ್ನ ಚಿಕ್ಕಂದಿನಿಂದ ಸುಖವಾಗಿತ್ತು; ಅದು ತನ್ನ ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತೆ ಸುಮ್ಮನೆ ಇತ್ತು; ಒಂದು ಪಾತ್ರೆಯೊಳಗಿಂದ ಮತ್ತೊಂದು ಪಾತ್ರೆಗೆ ಹೊಯ್ಯಲಾಗುವುದಿಲ್ಲ; ಸೆರೆಗೆ ಹೋಗಲಿಲ್ಲ; ಆದ್ದರಿಂದ ಅದರ ರುಚಿ ಅದರಲ್ಲಿ ಉಂಟು; ಅದರ ವಾಸನೆ ಬೇರೆ ಆಗಲಿಲ್ಲ.</verse>
				<verse number="12">ಆದ್ದರಿಂದ ಇಗೋ, ದಿನಗಳು ಬರುವವು” ಎಂದು ಯೆಹೋವ ದೇವರು ಅನ್ನುತ್ತಾರೆ; ಆಗ ನಾನು ಅದರ ಬಳಿಗೆ ಅಲೆದಾಡುವವರನ್ನು ಕಳುಹಿಸುವೆನು; ಅವರು ಅದು ಅಲೆದಾಡುವಂತೆ ಮಾಡುವರು; ಅದರ ಪಾತ್ರೆಗಳನ್ನು ಬರಿದುಮಾಡಿ, ತಮ್ಮ ಬುದ್ದಲಿಗಳನ್ನು ಒಡೆಯುವರು.</verse>
				<verse number="13">ಆಗ ಇಸ್ರಾಯೇಲಿನ ಮನೆಯವರು ತಾವು ನಂಬಿಕೊಂಡಿದ್ದ ಬೇತೇಲಿನ ವಿಷಯ ಹೇಗೆ ನಾಚಿಕೆಪಟ್ಟರೋ, ಹಾಗೆಯೇ ಮೋವಾಬು ಕೆಮೋಷನ ವಿಷಯ ನಾಚಿಕೆಪಡುವುದು.</verse>
				<verse number="14">“ ‘ನಾವು ಪರಾಕ್ರಮಶಾಲಿಗಳೂ, ಯುದ್ಧಕ್ಕೆ ಬಲಿಷ್ಠರೂ,’ ಎಂದು ನೀವು ಹೇಳುವುದು ಹೇಗೆ?</verse>
				<verse number="15">ಮೋವಾಬು ಸೂರೆಯಾಯಿತು. ಅದರ ಪಟ್ಟಣಗಳು ಏರಿ ಹೋದವು, ಅದರ ಶ್ರೇಷ್ಠ ಯೌವನಸ್ಥರು ಹತರಾಗುವುದಕ್ಕೆ ಹೋಗಿದ್ದಾರೆ,” ಎಂದು ಸರ್ವಶಕ್ತ ಯೆಹೋವ ಎಂಬ ಹೆಸರುಳ್ಳ ರಾಜಾಧಿರಾಜರ ನುಡಿ.</verse>
				<verse number="16">“ಮೋವಾಬಿಗೆ ಆಪತ್ತು ಬರುವುದಕ್ಕೆ ಸಮೀಪವಾಯಿತು. ಅದರ ಕೇಡು ಬಹು ತ್ವರೆಪಡುತ್ತದೆ.</verse>
				<verse number="17">ಅದರ ಸುತ್ತಲಿರುವವರೆಲ್ಲರೇ, ಅದಕ್ಕೆ ಗೋಳಾಡಿರಿ; ಅದರ ಹೆಸರನ್ನು ಬಲ್ಲವರೆಲ್ಲರೇ, ‘ಬಲವಾದ ಕೋಲೂ, ಮಹಿಮೆಯ ಬೆತ್ತವೂ ಹೇಗೆ ಮುರಿದುಹೋಯಿತು?’ ಎಂದು ಹೇಳಿರಿ.</verse>
				<verse number="18">“ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ಒಣಭೂಮಿಯ ಬಾಯಾರಿದವಳಂತೆ ಕೂತುಕೋ, ಏಕೆಂದರೆ ಮೋವಾಬನ್ನು ವಿನಾಶ ಮಾಡುವವನು ನಿನ್ನ ಮೇಲೆ ಬರುವನು; ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿಬಿಡುವನು.</verse>
				<verse number="19">ಅರೋಯೇರಿನ ನಿವಾಸಿಯೇ, ದಾರಿಯ ಬಳಿಯಲ್ಲಿ ನಿಂತು ದೃಷ್ಟಿಸು; ಓಡಿ ಹೋಗುವವನನ್ನೂ, ತಪ್ಪಿಸಿಕೊಳ್ಳುವವನನ್ನೂ ಏನಾಯಿತೆಂದು ಕೇಳು.</verse>
				<verse number="20">ಮೋವಾಬು ಚದರಿಹೋಯಿತೆಂದು ನಾಚಿಕೆಗೆ ಈಡಾಗಿದೆ. ಗೋಳಾಡಿರಿ, ಕೂಗಿರಿ; ಮೋವಾಬು ಹಾಳಾಯಿತೆಂದು ಅರ್ನೋನಿನಲ್ಲಿ ತಿಳಿಸಿರಿ.</verse>
				<verse number="21">ಇದಲ್ಲದೆ ಬಯಲುಸೀಮೆಯ ಮೇಲೆ ನ್ಯಾಯ ತೀರ್ವಿಕೆ ಬಂತು; ಹೋಲೋನ್, ಯಹಚ, ಮೇಫಾತ್,</verse>
				<verse number="22">ದೀಬೋನ್, ನೆಬೋ, ಬೇತ್ ದಿಬ್ಲಾತಯಿಮ್,</verse>
				<verse number="23">ಕಿರ್ಯಾತಯಿಮ್, ಬೇತ್ ಗಾಮುಲ್, ಬೇತ್ ಮೆಯೋನ್,</verse>
				<verse number="24">ಬೊಚ್ರ, ಕೆರೀಯೋತ್, ಹೀಗೆ ಸಮೀಪದಲ್ಲಾಗಲಿ, ದೂರದಲ್ಲಾಗಲಿ ಇರುವ, ಮೋವಾಬಿನ ಸಮಸ್ತ ಪಟ್ಟಣಗಳ ಮೇಲೆಯೂ ಬಂತು.</verse>
				<verse number="25">ಮೋವಾಬಿನ ಕೊಂಬು ಕಡಿದು ಹಾಕಲಾಗಿದೆ; ಅದರ ತೋಳು ಮುರಿಯಲಾಗಿದೆ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="26">“ಅದನ್ನು ನೀವು ಅಮಲೇರಿಸಿರಿ; ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ವಾಂತಿ ಮಾಡಿದ್ದರಲ್ಲಿ ಹೊರಳಾಡುವುದು; ಅದೇ ಹಾಸ್ಯಕ್ಕಾಗಿರುವುದು.</verse>
				<verse number="27">ಏಕೆಂದರೆ ನಿನ್ನೊಳಗೆ ಇಸ್ರಾಯೇಲೂ ಹಾಸ್ಯಕ್ಕಾಗಿರಲಿಲ್ಲವೋ? ಅದು ಕಳ್ಳರೊಳಗೆ ಸಿಕ್ಕಿತೇನೋ, ಏಕೆಂದರೆ ನೀನು ಅದರ ವಿಷಯ ಯಾವಾಗ ಮಾತನಾಡಿದಂದಿನಿಂದ ತಲೆ ಅಲ್ಲಾಡಿಸಿದ್ದೀಯಲ್ಲಾ.</verse>
				<verse number="28">ಮೋವಾಬಿನಲ್ಲಿ ವಾಸವಾಗಿರುವವರೇ, ಪಟ್ಟಣಗಳನ್ನು ಬಿಟ್ಟು ಬಂಡೆಯಲ್ಲಿ ವಾಸವಾಗಿರಿ; ಸಂದುಗಳ ಬಾಯಿಗಳ ಪಕ್ಕಗಳಲ್ಲಿ ಗೂಡು ಕಟ್ಟುವ ಪಾರಿವಾಳದ ಹಾಗಿರಿ.</verse>
				<verse number="29">“ಮೋವಾಬಿನ ಹೆಮ್ಮೆಯನ್ನು ಕುರಿತು, ಅದರ ಮಹಾ ಗರ್ವವನ್ನು ಕುರಿತು, ಅದರ ಡಂಭವನ್ನೂ, ಅಹಂಕಾರವನ್ನೂ, ಬಡಾಯಿಯನ್ನೂ, ಸೊಕ್ಕಿನ ಹೃದಯವನ್ನೂ ಕುರಿತು ಕೇಳಿದ್ದೇವೆ.</verse>
				<verse number="30">ನಾನು ಅದರ ಕೋಪೋದ್ರೇಕವನ್ನು ಬಲ್ಲೆನೆಂದು, ಅದು ವ್ಯರ್ಥ”, ಎಂದು ಯೆಹೋವ ದೇವರು ಅನ್ನುತ್ತಾರೆ; “ಆದರೆ ಅದು ಹಾಗೆ ಆಗುವುದಿಲ್ಲ; ಅವನ ಸುಳ್ಳುಗಳು ಸರಿಬೀಳುವುದಿಲ್ಲ.</verse>
				<verse number="31">ಆದ್ದರಿಂದ ನಾನು ಮೋವಾಬಿನ ನಿಮಿತ್ತ ಗೋಳಿಡುವೆನು; ಸಮಸ್ತ ಮೋವಾಬಿನ ನಿಮಿತ್ತ ಕೂಗುವೆನು; ಕೀರ್ ಹೆರೆಸಿನ ಮನುಷ್ಯರ ನಿಮಿತ್ತ ನನ್ನ ಹೃದಯವು ದುಃಖಿಸುವುದು.</verse>
				<verse number="32">ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ಅಳುವುದಕ್ಕಿಂತಲು ನಿನ್ನ ನಿಮಿತ್ತವಾಗಿ ಅಳುವೆನು; ನಿನ್ನ ಬಳ್ಳಿಗಳು ಸಮುದ್ರವನ್ನು ದಾಟಿದವು. ಯಜ್ಜೇರಿನ ಸಮುದ್ರಕ್ಕೆ ಮುಟ್ಟಿದವು; ನಿನ್ನ ಹಣ್ಣುಗಳ ಮೇಲೆಯೂ, ನಿನ್ನ ದ್ರಾಕ್ಷಿ ಸುಗ್ಗಿಯ ಮೇಲೆಯೂ ವಿನಾಶ ಮಾಡುವವನು ಬಿದ್ದಿದ್ದಾನೆ.</verse>
				<verse number="33">ಫಲವುಳ್ಳ ಹೊಲದಿಂದಲೂ, ಮೋವಾಬಿನ ದೇಶದಿಂದಲೂ ಸಂತೋಷವೂ, ಉಲ್ಲಾಸವೂ ತೆಗೆಯಲಾಗಿವೆ; ಏಕೆಂದರೆ ದ್ರಾಕ್ಷಿ ಆಲೆಗಳೊಳಗಿಂದ ದ್ರಾಕ್ಷಾರಸವನ್ನು ನಿಲ್ಲಿಸಿದ್ದೇನೆ; ಅವರ ಆರ್ಭಟದ ಸಂಗಡ ಅವರು ಯಾರೂ ತುಳಿಯುವುದಿಲ್ಲ; ಆರ್ಭಟವೇ ಆರ್ಭಟವಾಗುವುದಿಲ್ಲ.</verse>
				<verse number="34">“ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಲೆಯವರೆಗೂ, ಯಹಚಿನವರೆಗೂ, ಚೋಗರ್ ಮೊದಲ್ಗೊಂಡು ಹೊರೊನಯಿಮಿನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಮೂರು ವರ್ಷದ ಕಡಸಿನಂತೆ ತಮ್ಮ ಶಬ್ದವನ್ನೆತ್ತಿದ್ದರು; ಏಕೆಂದರೆ ನಿಮ್ರೀಮ್‌ನ ನೀರು ಸಹ ಹಾಳಾದವು.</verse>
				<verse number="35">ಇದಲ್ಲದೆ ಎತ್ತರ ಸ್ಥಳಗಳಲ್ಲಿ ಅರ್ಪಿಸುವವನನ್ನೂ, ತನ್ನ ದೇವರುಗಳಿಗೆ ಧೂಪಸುಡುವವನನ್ನೂ ಮೋವಾಬಿನಲ್ಲಿ ನಿಲ್ಲಿಸಿಬಿಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="36">“ಆದ್ದರಿಂದ ನನ್ನ ಹೃದಯವು ಮೋವಾಬಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವುದು. ನನ್ನ ಹೃದಯವು ಕೀರ್ ಹೆರೆಸಿನ ಮನುಷ್ಯರಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವುದು. ಏಕೆಂದರೆ ಅವನು ಮಾಡಿಕೊಂಡ ದ್ರವ್ಯ ನಾಶವಾಯಿತು.</verse>
				<verse number="37">ಏಕೆಂದರೆ ಎಲ್ಲಾ ತಲೆಗಳು ಬೋಳಾಗುವುವು; ಎಲ್ಲಾ ಗಡ್ಡಗಳು ಕ್ಷೌರವಾಗುವುವು; ಎಲ್ಲಾ ಕೈಗಳ ಮೇಲೆ ಗಾಯಗಳು, ಸೊಂಟಗಳ ಮೇಲೆ ಗೋಣಿತಟ್ಟು ಇರುವುವು.</verse>
				<verse number="38">ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ, ಅದರ ಎಲ್ಲಾ ಬೀದಿಗಳಲ್ಲಿಯೂ ಗೋಳಾಟ ತುಂಬಿ ಇರುವುದು. ಏಕೆಂದರೆ ಯಾರಿಗೂ ಬೇಡದ ಮಡಕೆಯ ಹಾಗೆ ಮೋವಾಬನ್ನು ನಾನು ಒಡೆದುಬಿಟ್ಟಿದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="39">“ಆಹಾ, ಭಂಗವಾಯಿತು! ಕಿರುಚಿಕೊಳ್ಳುತ್ತಾರಲ್ಲಾ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವುದಕ್ಕೂ, ಬೆಚ್ಚಿಬೀಳುವುದಕ್ಕೂ ಆಸ್ಪದವಾಗಿದೆ.”</verse>
				<verse number="40">ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಅವನು ಹದ್ದಿನ ಹಾಗೆ ಹಾರಿ, ಮೋವಾಬಿನ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು.</verse>
				<verse number="41">ಕೆರೀಯೋತ್ ಅವನಿಗೆ ವಶವಾಗುವುದು; ಬಲವಾದ ಕೋಟೆಗಳು ಅವನ ಕೈವಶವಾಗುವುವು; ಆ ದಿವಸದಲ್ಲಿ ಮೋವಾಬಿನ ಪರಾಕ್ರಮಶಾಲಿಗಳ ಹೆರುವ ಹೆಣ್ಣಿನ ಎದೆಯದಂತೆ ಅದರುವುದು.</verse>
				<verse number="42">ಏಕೆಂದರೆ ಮೋವಾಬು ಅದು ಯೆಹೋವ ದೇವರಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡದ್ದರಿಂದ, ಜನಾಂಗವಲ್ಲದ ಹಾಗೆ ನಾಶವಾಗುವುದು.</verse>
				<verse number="43">ಮೋವಾಬಿನ ನಿವಾಸಿಯೇ, ಹೆದರಿಕೆಯೂ, ಕುಳಿಯೂ, ಬೋನೂ ನಿನ್ನ ಮೇಲೆ ಇರುವುವು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="44">“ಹೆದರಿಕೆಗೆ ಓಡಿಹೋಗುವವನು ಗುಂಡಿಯಲ್ಲಿ ಬೀಳುವನು. ಗುಂಡಿಯೊಳಗಿಂದ ಏರಿಬರುವವನು, ಬೋನಿನಲ್ಲಿ ಸಿಕ್ಕಿಬೀಳುವನು. ಏಕೆಂದರೆ ನಾನು ಅದರ ಮೇಲೆ ಅಂದರೆ, ಮೋವಾಬಿನ ಮೇಲೆಯೇ ಅವರ ದಂಡನೆಯ ವರ್ಷವನ್ನು ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="45">“ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ ಅದರ ಶಕ್ತಿಯ ನಿಮಿತ್ತ ನಿಂತುಕೊಂಡರು; ಆದರೆ ಹೆಷ್ಬೋನಿನೊಳಗಿಂದ ಬೆಂಕಿಯೂ, ಸೀಹೋನನ ಮಧ್ಯದಿಂದ ಜ್ವಾಲೆಯೂ ಹೊರಟು ಮೋವಾಬಿನ ಮೂಲೆಯನ್ನೂ, ಗದ್ದಲದ ಮಕ್ಕಳ ನಡುನೆತ್ತಿಯನ್ನೂ ದಹಿಸಿಬಿಡುವುದು.</verse>
				<verse number="46">ಮೋವಾಬೇ, ನೀನೇ ಅಯ್ಯೋ! ಕೆಮೋಷಿನ ಜನರು ನಾಶವಾದರು; ಏಕೆಂದರೆ ನಿನ್ನ ಗಂಡು ಹೆಣ್ಣುಮಕ್ಕಳು, ಗಡೀಪಾರಾಗಿ ಸೆರೆಯಾದರು.</verse>
				<verse number="47">“ಆದರೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸಮೃದ್ಧಿಯನ್ನು ತಿರುಗಿ ತರುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. ಈವರೆಗೆ ಮೋವಾಬಿನ ನ್ಯಾಯ ತೀರ್ವಿಕೆಯು ಇರುವುದು.</verse>
			</chapter>
			<chapter number="49">
				<verse number="1">ಅಮ್ಮೋನ್ಯರನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿಗೆ ಪುತ್ರರಿಲ್ಲವೋ? ಅವನಿಗೆ ಬಾಧ್ಯಸ್ಥನಿಲ್ಲವೋ? ಮಲ್ಕಾಮ್ ದೇವತೆಯು ಗಾದನ್ನು ಬಾಧ್ಯವಾಗಿ ತೆಗೆದುಕೊಳ್ಳುವುದು ಏಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವುದು ಏಕೆ?</verse>
				<verse number="2">ಆದ್ದರಿಂದ ಇಗೋ, ದಿನಗಳು ಬರುವುವು,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ಮಾಡುವೆನು; ಅದು ಹಾಳು ದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯವನ್ನು ಹೊಂದುವುದು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="3">“ಹೆಷ್ಬೋನೇ ಗೋಳಾಡು; ಏಕೆಂದರೆ ಆಯಿ ಎಂಬ ನಗರ ಹಾಳಾಯಿತು; ರಬ್ಬಾದ ನಿವಾಸಿಗಳೇ ಗೋಳಾಡಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಏಕೆಂದರೆ ಮಲ್ಕಾಮ್ ದೇವತೆ, ಅವನ ಯಾಜಕರು, ಅವನ ಪ್ರಧಾನರು ಒಟ್ಟಾಗಿ ಸೆರೆಗೆ ಹೋಗುವರು.</verse>
				<verse number="4">ಹಿಂದಿರುಗು, ಹಿಂಜರಿದು ಹೋದ ಮಗಳೇ, ನನ್ನ ಬಳಿಗೆ ಬರುವವರು ಯಾರೆಂದು ಹೇಳಿ, ನಿನ್ನ ಬೊಕ್ಕಸಗಳಲ್ಲಿ ನಂಬಿಕೆ ಇಟ್ಟವಳೇ, ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? ತಗ್ಗುಗಳ ವಿಷಯವಾಗಿ ಏಕೆ ಹೆಚ್ಚಳ ಪಡುತ್ತೀ?</verse>
				<verse number="5">ಇಗೋ, ನಾನು ನಿನ್ನ ಸುತ್ತಲಿರುವವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಅನ್ನುತ್ತಾರೆ. “ಆಗ ನಿಮ್ಮಲ್ಲಿ ಪ್ರತಿಯೊಬ್ಬನನ್ನೂ ಅಟ್ಟಲಾಗುವುದು; ಓಡಿಹೋದವರನ್ನು ಕೂಡಿಸುವವನು ಒಬ್ಬನೂ ಇರುವುದಿಲ್ಲ.</verse>
				<verse number="6">“ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="7">ಎದೋಮ್ಯರನ್ನು ಕುರಿತದ್ದು: ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ. “ತೇಮಾನ್‌ನಲ್ಲಿ ಇನ್ನು ಮೇಲೆ ಜ್ಞಾನವಿರುವುದಿಲ್ಲವೋ? ವಿವೇಕಿಗಳಿಂದ ಆಲೋಚನೆಯು ನಾಶವಾಯಿತೋ? ಅವರ ಜ್ಞಾನವು ಕ್ಷೀಣಿಸಿದೆಯೇ?</verse>
				<verse number="8">ದೇದಾನಿನ ನಿವಾಸಿಗಳೇ, ಓಡಿಹೋಗಿರಿ; ತಿರುಗಿಕೊಳ್ಳಿರಿ; ಆಳವಾದ ಗುಹೆಯಲ್ಲಿ ವಾಸಮಾಡಿರಿ; ಏಕೆಂದರೆ ಏಸಾವನ ಆಪತ್ತನ್ನೂ, ನಾನು ಅವನನ್ನು ಶಿಕ್ಷಿಸುವ ಕಾಲವನ್ನೂ ಅವನ ಮೇಲೆ ಬರಮಾಡುತ್ತೇನೆ.</verse>
				<verse number="9">ದ್ರಾಕ್ಷಿ ಕೀಳುವವರು ನಿಮ್ಮ ಬಳಿಗೆ ಬಂದರೆ ಸ್ವಲ್ಪ ದ್ರಾಕ್ಷಿಯನ್ನು ಬಿಡುವುದಿಲ್ಲವೇ? ಕಳ್ಳರು ರಾತ್ರಿ ವೇಳೆಯಲ್ಲಿ ನುಗ್ಗಿದರೆ ತಮಗೆ ಸಾಕಾಗುವವರೆಗೂ ಕದಿಯುವುದಿಲ್ಲವೇ?</verse>
				<verse number="10">ಆದರೆ ನಾನು ಏಸಾವನನ್ನು ಬರಿದು ಮಾಡಿದ್ದೇನೆ; ಅದರ ರಹಸ್ಯ ಸ್ಥಳಗಳನ್ನು ತೆರೆದಿದ್ದೇನೆ; ಅವನು ತನ್ನನ್ನು ತಾನೇ ಅಡಗಿಸಿಕೊಳ್ಳಲಾರನು; ಅವನ ಸಂತಾನವು ಹಾಳಾಯಿತು; ಅವನ ಸಹೋದರರೂ, ಅವನ ನೆರೆಯವರೂ, ಅವನೂ ಇಲ್ಲವಾದರು.</verse>
				<verse number="11">ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು. ನಾನೇ ರಕ್ಷಿಸುವೆನು. ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.”</verse>
				<verse number="12">ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪಾತ್ರೆಯಲ್ಲಿ ಕುಡಿಯುವುದಕ್ಕೆ ಯಾರಿಗೆ ನ್ಯಾಯ ತೀರ್ವಿಕೆ ಆಗಲಿಲ್ಲವೋ, ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಶಿಕ್ಷಿಸದೆ ಹೋಗಬೇಕು? ನೀವು ಶಿಕ್ಷಿಸದೆ ಹೋಗುವುದಿಲ್ಲ, ನಿಶ್ಚಯವಾಗಿ ಕುಡಿಯುವೆ.</verse>
				<verse number="13">ಏಕೆಂದರೆ ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವುದೆಂದೂ ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾಗುವುವೆಂದೂ, ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆ,” ಎಂದು ಯೆಹೋವ ದೇವರು ಅನ್ನುತ್ತಾರೆ.</verse>
				<verse number="14">ಯೆಹೋವ ದೇವರಿಂದ ನಾನು ಸುದ್ದಿಯನ್ನು ಕೇಳಿದ್ದೇನೆ. ಅವರು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾರೆ; “ನೀವು ಒಟ್ಟುಗೂಡಿಕೊಂಡು ಅದಕ್ಕೆ ವಿರೋಧವಾಗಿ ಬನ್ನಿರಿ, ಯುದ್ಧಕ್ಕಾಗಿ ಏಳಿರಿ!”</verse>
				<verse number="15">“ಏಕೆಂದರೆ ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿಯೂ, ಜನರ ತಿರಸ್ಕಾರಕ್ಕೆ ಈಡಾಗುವಂತೆಯೂ ಮಾಡುವೆನು.</verse>
				<verse number="16">ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ನಿನ್ನ ಭಯಂಕರವೂ ನಿನ್ನ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಸ್ಥಳದಲ್ಲಿ ಕಟ್ಟಿದರೂ, ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="17">“ಎದೋಮು ಸಹ ಹಾಳಾಗುವುದು; ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು.</verse>
				<verse number="18">ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="19">“ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು. ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”</verse>
				<verse number="20">ಆದ್ದರಿಂದ ಯೆಹೋವ ದೇವರು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ. ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವುವು. ಖಂಡಿತವಾಗಿ, ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.</verse>
				<verse number="21">ಎದೋಮ್ಯರು ತಟ್ಟನೆ ಬೀಳುವ ಶಬ್ದದಿಂದ ಭೂಮಿಯು ಕಂಪಿಸುವುದು. ಆಗ ಉಂಟಾಗುವ ಗೋಳು ಕೆಂಪು ಸಮುದ್ರದವರೆಗೂ ಪ್ರತಿಧ್ವನಿಸುವುದು.</verse>
				<verse number="22">ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮಶಾಲಿಗಳು ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವುದು.</verse>
				<verse number="23">ದಮಸ್ಕದ ವಿಷಯವಾಗಿ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ, ಅವು ಕೆಟ್ಟ ಸುದ್ದಿಯನ್ನು ಕೇಳಿ ಅಧೈರ್ಯಪಟ್ಟಿವೆ; ಸಮುದ್ರದಂತೆ ಕಳವಳಪಡುತ್ತದೆ; ಅದು ಸುಮ್ಮನಿರಲಾರದು.</verse>
				<verse number="24">ದಮಸ್ಕವು ನಿತ್ರಾಣವಾಯಿತು; ಓಡಿಹೋಗುವುದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡಿದುಕೊಂಡಿದೆ; ಹೆರುವ ಸ್ತ್ರೀಯ ಹಾಗೆ ಸಂಕಟವೂ, ವೇದನೆಗಳೂ ಅದನ್ನು ಹಿಡಿದಿವೆ.</verse>
				<verse number="25">ಹೊಗಳಿಕೆಯ ಪಟ್ಟಣವೂ ನನ್ನ ಸಂತೋಷದ ಪಟ್ಟಣವೂ ಬಿಡಲಾಗಿದೆ ಅಲ್ಲವೋ?</verse>
				<verse number="26">ಆದ್ದರಿಂದ ಅದರ ಯೌವನಸ್ಥರು ಅದರ ಚೌಕಗಳಲ್ಲಿ ಬೀಳುವರು; ಯುದ್ಧಭಟರೆಲ್ಲರೂ ಆ ದಿವಸದಲ್ಲಿ ಕಡಿದುಹಾಕಲಾಗುವರು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.</verse>
				<verse number="27">“ಏಕೆಂದರೆ ನಾನು ದಮಸ್ಕದ ಗೋಡೆಯಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಬೆನ್ಹದದನ ಅರಮನೆಗಳನ್ನು ತಿಂದುಬಿಡುವುದು.”</verse>
				<verse number="28">ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದಾಳಿಮಾಡಿದ ಕೇದಾರ್ ಹಾಗೂ ಹಾಚೋರ್ ರಾಜ್ಯಗಳನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ, “ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ. ಪೂರ್ವದಿಕ್ಕಿನ ಮನುಷ್ಯರನ್ನು ಸುಲಿದುಕೊಳ್ಳಿರಿ.</verse>
				<verse number="29">ಅವರ ಗುಡಾರಗಳನ್ನೂ, ಅವರ ಮಂದೆಗಳನ್ನೂ ತೆಗೆದುಕೊಳ್ಳುವರು. ಅವರ ಗುಡಾರದ ಪರದೆಗಳನ್ನೂ, ಅವರ ಎಲ್ಲಾ ಸಾಮಾನುಗಳನ್ನೂ, ಅವರ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯ, ಎಂದು ಅವರಿಗೆ ಕೂಗುವರು.</verse>
				<verse number="30">“ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ, ದೂರಕ್ಕೆ ಹೋಗಿ ಬಿಡಿರಿ, ಆಳವಾದ ಗುಹೆಯಲ್ಲಿ ವಾಸವಾಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. ಏಕೆಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಿಮಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ; ನಿಮಗೆ ವಿರೋಧವಾಗಿ ಯೋಜನೆಯನ್ನು ಮಾಡಿದ್ದಾನೆ.</verse>
				<verse number="31">“ಏಳಿರಿ, ಭದ್ರವಾಗಿ ವಾಸಿಸುವ ಸುಖವುಳ್ಳ ಜನಾಂಗದ ಬಳಿಗೆ ಹೋಗಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. “ಅದಕ್ಕೆ ಬಾಗಿಲುಗಳು ಇಲ್ಲ; ಅಗುಳಿಗಳು ಇಲ್ಲ; ಅದರ ಜನರು ಅಪಾಯದಿಂದ ದೂರ ವಾಸಿಸುತ್ತಾರೆ.</verse>
				<verse number="32">ಅವರ ಒಂಟೆಗಳು ಕೊಳ್ಳೆಯಾಗುವುವು; ಅವರ ದನಗಳ ಸಮೂಹವು ಸುಲಿಗೆಯಾಗುವುದು; ಕಟ್ಟಕಡೆಯ ಮೂಲೆಗಳಲ್ಲಿ ಇರುವವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಸರ್ವಕಡೆಯಿಂದ ಅವರ ಮೇಲೆ ಆಪತ್ತನ್ನು ತರಿಸುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="33">ಹಾಚೋರು ನರಿಗಳ ನಿವಾಸವೂ, ಎಂದೆಂದಿಗೂ ಹಾಳಾದ ಸ್ಥಳವೂ ಆಗುವುದು. ಅಲ್ಲಿ ಯಾವನಾದರೂ ವಾಸಮಾಡುವುದಿಲ್ಲ. ಯಾವ ನರಪುತ್ರನಾದರೂ ಅಲ್ಲಿ ತಂಗುವುದಿಲ್ಲ.</verse>
				<verse number="34">ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆಮೀಯನಿಗೆ ಯೆಹೋವ ದೇವರಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು:</verse>
				<verse number="35">ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಗೋ, ನಾನು ಏಲಾಮಿನ ಬಿಲ್ಲನ್ನೂ, ಅವರ ಪರಾಕ್ರಮವನ್ನೂ, ಶ್ರೇಷ್ಠತ್ವವನ್ನೂ ಮುರಿಯುತ್ತೇನೆ</verse>
				<verse number="36">ಆಕಾಶದ ನಾಲ್ಕು ದಿಕ್ಕುಗಳಿಂದ ಏಲಾಮಿನ ಮೇಲೆ ನಾಲ್ಕು ಗಾಳಿಗಳನ್ನು ತಂದು, ಅವರನ್ನು ಆ ಎಲ್ಲಾ ದಿಕ್ಕುಗಳ ಕಡೆಗೆ ಚದರಿಸುವೆನು; ಏಲಾಮಿನಿಂದ ಓಡಿಸಲಾದವರು ಸೇರದ ಜನಾಂಗವು ಇರುವುದಿಲ್ಲ.</verse>
				<verse number="37">ಏಕೆಂದರೆ ಏಲಾಮನ್ನು ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಮುಂದೆಯೂ ಹೆದರುವಂತೆ ಮಾಡುವೆನು; ಅವರ ಮೇಲೆ ಕೇಡನ್ನೂ, ನನ್ನ ಕೋಪದ ಉಗ್ರವನ್ನೂ ಬರಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವನನ್ನು ಮುಗಿಸಿಬಿಡುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.</verse>
				<verse number="38">ಇದಲ್ಲದೆ ಏಲಾಮಿನಲ್ಲಿ ನನ್ನ ಸಿಂಹಾಸನವನ್ನಿಟ್ಟು, ಅದರೊಳಗಿಂದ ಅರಸನನ್ನೂ, ಪ್ರಧಾನರನ್ನೂ ನಾಶಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="39">“ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವುದೇನೆಂದರೆ, ನಾನು ಏಲಾಮಿನ ಸಮೃದ್ಧಿಯನ್ನು ತಿರುಗಿ ತರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
			</chapter>
			<chapter number="50">
				<verse number="1">ಬಾಬಿಲೋನಿಯರ ದೇಶವಾದ ಬಾಬಿಲೋನಿಯದ ಕುರಿತು ಪ್ರವಾದಿ ಯೆರೆಮೀಯನಿಂದ ಯೆಹೋವ ದೇವರು ನುಡಿಸಿದ ವಾಕ್ಯ ಇದು:</verse>
				<verse number="2">“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವನ್ನೆತ್ತಿ ಪ್ರಕಟಿಸಿರಿ; ಮರೆಮಾಡದೇ ಹೀಗೆ ಸಾರಿರಿ, ‘ಬಾಬಿಲೋನ್ ಶತ್ರುವಶವಾಯಿತು; ಬೇಲ್ ದೇವತೆಗೆ ನಾಚಿಕೆಯಾಯಿತು; ಮೆರೋದಾಕ್ ತುಂಡುತುಂಡಾಗಿ ಮುರಿದು ಹೋದನು. ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಮತ್ತು ಅವಳ ವಿಗ್ರಹಗಳು ಭಯದಿಂದ ತುಂಬಿವೆ.’</verse>
				<verse number="3">ಏಕೆಂದರೆ ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳುಮಾಡಿಬಿಡುವುದು; ಅವಳಲ್ಲಿ ಯಾರೂ ವಾಸಿಸುವುದಿಲ್ಲ; ಮನುಷ್ಯರೂ, ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ.</verse>
				<verse number="4">“ಆ ದಿವಸಗಳಲ್ಲಿಯೂ ಆ ಕಾಲದಲ್ಲಿಯೂ ಇಸ್ರಾಯೇಲರು ಬರುವರು; ಅವರೂ, ಯೆಹೂದ್ಯರೂ ಒಟ್ಟಾಗಿ ಕೂಡಿಕೊಳ್ಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಯೆಹೋವ ದೇವರನ್ನು ಹುಡುಕುವರು.</verse>
				<verse number="5">ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ ಬನ್ನಿ; ಮರೆತು ಹೋಗದ ನಿತ್ಯವಾದ ಒಡಂಬಡಿಕೆಯಿಂದ ಯೆಹೋವ ದೇವರನ್ನು ಸೇರಿಕೊಳ್ಳೋಣ, ಅನ್ನುವರು.</verse>
				<verse number="6">“ನನ್ನ ಜನರು ಕಳೆದುಹೋದ ಕುರಿಗಳಾಗಿದ್ದಾರೆ; ಅವರ ಕುರುಬರು ಅವರನ್ನು ತಪ್ಪಿಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.</verse>
				<verse number="7">ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ಎದುರಾಳಿಗಳು, ‘ನಾವು ಅವರನ್ನು ನುಂಗಿದ್ದು ದೋಷವಲ್ಲ; ಏಕೆಂದರೆ ನೀತಿಯ ನಿವಾಸವಾದ ಯೆಹೋವ ದೇವರಿಗೆ, ಹೌದು, ಅವರ ಪೂರ್ವಜರ ನಿರೀಕ್ಷೆಯಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದಾರೆ,’ ಎಂದುಕೊಂಡರು.</verse>
				<verse number="8">“ಬಾಬಿಲೋನಿನೊಳಗಿಂದ ಓಡಿಹೋಗಿರಿ; ಬಾಬಿಲೋನಿನ ಸೀಮೆಯಿಂದ ಹೊರಡಿರಿ; ಮಂದೆಯ ಮುಂದೆ ಹೋತಗಳ ಹಾಗೆ ಇರಿ.</verse>
				<verse number="9">ಏಕೆಂದರೆ ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ, ಬಾಬಿಲೋನಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧವಾಗಿ ಯುದ್ಧ ಸಿದ್ಧಮಾಡುವರು. ಅಲ್ಲಿಂದ ಅದು ಹಿಡಿಯಲಾಗುವುದು. ಅವರ ಬಾಣಗಳು ಬಲಿಷ್ಠನಾದ ಪ್ರವೀಣ ಶೂರನಂತಿರುವುವು. ಯಾವುದೂ ವ್ಯರ್ಥವಾಗಿ ತಿರುಗದು.</verse>
				<verse number="10">ಬಾಬಿಲೋನಿನ ದೇಶವು ಸುಲಿಗೆಯಾಗುವುದು; ಅದನ್ನು ಸುಲಿದುಕೊಳ್ಳುವವರೆಲ್ಲರಿಗೆ ತೃಪ್ತಿಯಾಗುವುದು, ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="11">“ಏಕೆಂದರೆ ನನ್ನ ಸೊತ್ತನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ, ನೀವು ಉಲ್ಲಾಸಿಸಿದ್ದರಿಂದಲೂ, ಕೊಬ್ಬಿದ ಕಡಸಿನ ಹಾಗೆ ಗರ್ವ ಪಟ್ಟದ್ದರಿಂದಲೂ, ಗಂಡು ಕುದುರೆಗಳ ಹಾಗೆ ಹೂಂಕರಿಸಿದ್ದರಿಂದಲೂ,</verse>
				<verse number="12">ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗಗಳಲ್ಲಿ ಅಂತ್ಯವಾದದ್ದು ಕಾಡೂ, ಒಣ ಭೂಮಿಯೂ, ಮರುಭೂಮಿಯೂ ಆಗುವುದು.</verse>
				<verse number="13">ಯೆಹೋವ ದೇವರ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವುದಿಲ್ಲ; ಸಂಪೂರ್ಣ ಹಾಳಾಗುವುದು; ಬಾಬಿಲೋನನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಗಾಯಗಳ ವಿಷಯ ವಿಸ್ಮಯಪಟ್ಟು ಸಿಳ್ಳುಹಾಕುವರು.</verse>
				<verse number="14">“ಬಿಲ್ಲನ್ನು ಬಗ್ಗಿಸುವವರೇ, ಬಾಬಿಲೋನಿಗೆ ವಿರೋಧವಾಗಿ ಸುತ್ತಲೂ ಯುದ್ಧ ಸಿದ್ಧಮಾಡಿರಿ; ಅದಕ್ಕೆ ಎಸೆಯಿರಿ; ಬಾಣಗಳನ್ನು ಕಡಿಮೆ ಮಾಡಬೇಡಿರಿ; ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿತಲ್ಲಾ.</verse>
				<verse number="15">ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಅದರ ಬುರುಜುಗಳು ಬಿದ್ದು ಹೋದವು; ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಅದು ಯೆಹೋವ ದೇವರ ಪ್ರತಿದಂಡನೆ; ಆದ್ದರಿಂದ ನೀವೂ ಅದಕ್ಕೆ ಮುಯ್ಯಿತೀರಿಸಿರಿ. ಅದು ಇತರರಿಗೆ ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.</verse>
				<verse number="16">ಬಿತ್ತುವವನನ್ನೂ, ಸುಗ್ಗಿಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬಿಲೋನಿನೊಳಗಿಂದ ಕಡಿದುಬಿಡಿರಿ; ಕಷ್ಟಪಡುವ ಖಡ್ಗದ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿಹೋಗುವರು.</verse>
				<verse number="17">“ಇಸ್ರಾಯೇಲನು ಚದರಿಹೋದ ಕುರಿಯಾಗಿದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಸ್ಸೀರಿಯನ ಅರಸನು ಅವನನ್ನು ತಿಂದುಬಿಟ್ಟನು. ಕಡೆಯಲ್ಲಿ ಬಾಬಿಲೋನಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.”</verse>
				<verse number="18">ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅಸ್ಸೀರಿನ ಅರಸನನ್ನು ಶಿಕ್ಷಿಸಿದ ಹಾಗೆ ಬಾಬಿಲೋನಿನ ಅರಸನನ್ನೂ, ಅವನ ದೇಶವನ್ನೂ ಶಿಕ್ಷಿಸುತ್ತೇನೆ.</verse>
				<verse number="19">ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರುಗಿ ಬರಮಾಡುತ್ತೇನೆ; ಅವನು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯೀಮ್ ಬೆಟ್ಟದಲ್ಲಿಯೂ, ಗಿಲ್ಯಾದಿನಲ್ಲಿಯೂ ತೃಪ್ತಿ ಹೊಂದುವುದು.”</verse>
				<verse number="20">ಯೆಹೋವ ದೇವರು ಹೇಳುತ್ತಾರೆ, “ಆ ದಿವಸಗಳಲ್ಲಿಯೂ, ಆ ಕಾಲದಲ್ಲಿಯೂ ಇಸ್ರಾಯೇಲಿನ ಅಕ್ರಮವನ್ನು ಹುಡುಕಿದರೂ, ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವುದಿಲ್ಲ. ಏಕೆಂದರೆ ನಾನು ಉಳಿಸುವವರನ್ನು ಮನ್ನಿಸುತ್ತೇನೆ.</verse>
				<verse number="21">“ಮೆರಾಥಯಿಮ್ ದೇಶಕ್ಕೆ ವಿರೋಧವಾಗಿ, ಪೆಕೋದಿನ ನಿವಾಸಿಗಳಿಗೆ ವಿರೋಧವಾಗಿಯೂ ದಂಡೆತ್ತಿ ಹೋಗು; ಅವರನ್ನು ಹಿಂದಟ್ಟಿ ಸಂಹರಿಸು. ಸಂಪೂರ್ಣ ನಾಶಮಾಡು.” “ನಾನು ನಿನಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಮಾಡು, ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="22">ಯುದ್ಧದ ಶಬ್ದವೂ, ದೊಡ್ಡ ನಾಶನವೂ ದೇಶದಲ್ಲಿ ಇರುವುದು.</verse>
				<verse number="23">ಇಗೋ, ಲೋಕವನ್ನೆಲ್ಲಾ ಹೊಡೆದ ಸುತ್ತಿಗೆಯು ಮುರಿದು ತುಂಡುತುಂಡಾಯಿತು! ಹೇಗೆ ಬಾಬೆಲ್ ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!</verse>
				<verse number="24">ನಾನು ಬೋನನ್ನು ಇಟ್ಟೆನು; ಹೌದು, ಬಾಬಿಲೋನೇ ನೀನು ಸಿಕ್ಕಿಕೊಂಡೆ. ಆದರೆ ನಿನಗೆ ತಿಳಿಯದೆ ಇತ್ತು. ನೀನು ಯೆಹೋವ ದೇವರಿಗೆ ವಿರೋಧವಾಗಿ ಜಗಳವಾಡಿದ್ದರಿಂದಲೇ ಸಿಕ್ಕಿಕೊಂಡೆ ಮತ್ತು ವಶವಾದೆ.</verse>
				<verse number="25">ಯೆಹೋವ ದೇವರು ತನ್ನ ಆಯುಧ ಶಾಲೆಯನ್ನು ತೆರೆದು, ತನ್ನ ರೋಷದ ಆಯುಧಗಳನ್ನು ಹೊರಗೆ ತಂದಿದ್ದಾರೆ. ಏಕೆಂದರೆ ಬಾಬಿಲೋನಿನ ದೇಶದಲ್ಲಿ ಸಾರ್ವಭೌಮ ಸೇನಾಧೀಶ್ವರ ಯೆಹೋವ ದೇವರಿಗೆ ಕೆಲಸವಿದೆ.</verse>
				<verse number="26">ಕಟ್ಟಕಡೆಯ ಮೇರೆಯಿಂದ ಅದಕ್ಕೆ ವಿರೋಧವಾಗಿ ಬನ್ನಿ. ಅದರ ಕಣಜಗಳನ್ನು ತೆರೆಯಿರಿ. ಅದನ್ನು ದಿಬ್ಬಗಳಂತೆ ತುಳಿಯಿರಿ. ಸಂಪೂರ್ಣವಾಗಿ ನಾಶಮಾಡಿರಿ. ಅದಕ್ಕೆ ಒಂದೂ ಉಳಿಯದಿರಲಿ.</verse>
				<verse number="27">ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ, ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ. ದಂಡನೆಯ ದಿನವು ಸಂಭವಿಸಿದೆ.</verse>
				<verse number="28">ಅವರು ಚೀಯೋನಿನಲ್ಲಿ ನಮ್ಮ ದೇವರಾದ ಯೆಹೋವ ದೇವರ ಪ್ರತಿದಂಡನೆಯನ್ನೂ, ಆತನ ಆಲಯದ ಪ್ರತಿದಂಡನೆಯನ್ನೂ ತಿಳಿಸುತ್ತಾ, ಬಾಬಿಲೋನಿನ ದೇಶದಿಂದ ತಪ್ಪಿಸಿಕೊಂಡು ಓಡಿ ಹೋಗುವವರ ಸ್ವರವನ್ನು ಕೇಳಿರಿ.</verse>
				<verse number="29">“ಬಾಬಿಲೋನಿಗೆ ವಿರೋಧವಾಗಿ ಬಿಲ್ಲುಬಾಣಗಾರರನ್ನೆಲ್ಲ ಒಟ್ಟಾಗಿ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಅದು ಅಹಂಕಾರದಿಂದ ಇಸ್ರಾಯೇಲರ ಪರಿಶುದ್ಧ ಯೆಹೋವ ದೇವರನ್ನು ಅಸಡ್ಡೆಮಾಡಿತು.</verse>
				<verse number="30">ಆದ್ದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಸೈನಿಕರೆಲ್ಲಾ ಆ ದಿವಸದಲ್ಲಿ ಸುಮ್ಮನಾಗುವರು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="31">“ಅತಿ ಗರ್ವಿಷ್ಠನೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ,” ಎಂದು ಸೈನ್ಯಗಳ ದೇವರಾದ ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನಿನ್ನ ದಿವಸವೂ, ನಿನ್ನ ಶಿಕ್ಷೆಯ ಕಾಲವೂ ಬಂತು.</verse>
				<verse number="32">ಅಹಂಕಾರದಿಂದ ಕೂಡಿದ ರಾಜ್ಯ ಎಡವಿ ಬೀಳುವುದು. ಅದನ್ನು ಯಾರೂ ಎತ್ತರು. ಅದರ ನಗರಗಳಿಗೆ ಬೆಂಕಿ ಹೊತ್ತಿಸುವೆನು. ಅದು ಸುತ್ತಮುತ್ತಣದನ್ನೆಲ್ಲ ನುಂಗಿಬಿಡುವುದು.”</verse>
				<verse number="33">ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಸ್ರಾಯೇಲರೂ, ಯೆಹೂದ್ಯರೂ ಕೂಡ ಹಿಂಸೆಗೆ ಗುರಿಯಾಗಿದ್ದಾರೆ; ಅವರನ್ನು ಸೆರೆಗೆ ಒಯ್ಯುವವರೆಲ್ಲರು ಅವರನ್ನು ಬಿಟ್ಟುಬಿಡುವುದಿಲ್ಲವೆಂದು, ಬಲವಾಗಿ ಪಟ್ಟುಹಿಡಿದಿದ್ದಾರೆ.</verse>
				<verse number="34">ಅವರ ವಿಮೋಚಕನು ಬಲಿಷ್ಠನೇ, ಸೇನಾಧೀಶ್ವರ ಯೆಹೋವ ದೇವರೆಂಬುದೇ ಅವರ ಹೆಸರು; ಅವರು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ, ಬಾಬಿಲೋನಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ, ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವರು.</verse>
				<verse number="35">“ಬಾಬಿಲೋನಿಯರ ಮೇಲೆ ಬೀಳಲಿದೆ ಖಡ್ಗ,” ಎಂದು ಯೆಹೋವ ದೇವರು ಹೇಳುತ್ತಾರೆ. “ಅದರ ಜನಸಾಮಾನ್ಯರನ್ನು, ಪ್ರಧಾನರನ್ನು, ಪಂಡಿತರನ್ನು ಇವರೆಲ್ಲರನ್ನು ಹತಿಸಲಿದೆ ಖಡ್ಗ,</verse>
				<verse number="36">ಸುಳ್ಳು ಪ್ರವಾದಿಗಳ ವಿರೋಧವಾಗಿ ಖಡ್ಗ ಉಂಟು; ಅವರು ಮೂರ್ಖರಾಗುವರು; ಅದರ ಪರಾಕ್ರಮಶಾಲಿಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವರು ಭಯಭ್ರಾಂತಿ ಪಡುವರು.</verse>
				<verse number="37">ಅದರ ಕುದುರೆಗಳಿಗೆ ವಿರೋಧವಾಗಿಯೂ, ಅವರ ರಥಗಳಿಗೆ ವಿರೋಧವಾಗಿಯೂ, ಅವರೊಳಗಿರುವ ಎಲ್ಲಾ ಸಕಲ ಜನರಿಗೆ ವಿರೋಧವಾಗಿಯೂ ಖಡ್ಗ ಉಂಟು; ಅವರ ಹೆಂಗಸರಂತೆ ಅಶಕ್ತರಾಗುವರು; ಅದರ ಬೊಕ್ಕಸಗಳಿಗೆ ವಿರೋಧವಾಗಿ ಖಡ್ಗ ಉಂಟು; ಅವು ಕೊಳ್ಳೆಯಾಗುವುವು.</verse>
				<verse number="38">ಬೇಗೆಯು ಅವರ ನೀರನ್ನೆಲ್ಲಾ ಹೀರಲಿ; ಅದು ಬತ್ತಿಹೋಗುವುದು; ಏಕೆಂದರೆ ಅದು ವಿಗ್ರಹಗಳ ದೇಶವೇ, ಅವರು ಭಯಂಕರವಾದ ವಿಗ್ರಹಗಳಿಂದ ಹುಚ್ಚರಾದರು.</verse>
				<verse number="39">“ಆದ್ದರಿಂದ ಅರಣ್ಯದ ಕಾಡುಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವುವು; ಉಷ್ಟ್ರಪಕ್ಷಿಗಳೂ ಸಹ ಅದರಲ್ಲಿ ವಾಸಮಾಡುವುವು; ತಲತಲಾಂತರಗಳವರೆಗೂ ಯಾರೂ ಅದರಲ್ಲಿ ತಂಗುವುದಿಲ್ಲ.</verse>
				<verse number="40">ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ” ಎಂದು ಯೆಹೋವ ದೇವರು ಅನ್ನುತ್ತಾರೆ.</verse>
				<verse number="41">“ಇಗೋ, ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬರುವುದು ಅನೇಕ ಅರಸರು ಎಚ್ಚರಗೊಳ್ಳುವರು. ಅವರು ಲೋಕದ ಕಟ್ಟಕಡೆಯಿಂದ ಬರುತ್ತಾರೆ.</verse>
				<verse number="42">ಅವರು ಬಿಲ್ಲನ್ನೂ, ಭಲ್ಲೆಯನ್ನೂ ಹಿಡಿದುಕೊಂಡಿದ್ದಾರೆ. ಅವರು ಕ್ರೂರರು, ಕನಿಕರ ತೋರಿಸುವುದಿಲ್ಲ. ಅವರ ಶಬ್ದವು ಸಮುದ್ರದ ಹಾಗೆ ಭೋರ್ಗರೆಯುತ್ತದೆ. ಬಾಬಿಲೋನಿನ ಮಗಳೇ, ನಿನಗೆ ವಿರೋಧವಾಗಿಯೇ ಯುದ್ಧಮಾಡುವುದಕ್ಕೆ ಸಿದ್ಧವಾಗಿರುವ ಶೂರರಂತೆ ಕುದುರೆಗಳನ್ನು ಹತ್ತಿಕೊಂಡು ಬರುತ್ತಿದ್ದಾರೆ.</verse>
				<verse number="43">ಬಾಬಿಲೋನಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ; ಅವನ ಕೈಗಳು ನಿತ್ರಾಣವಾದವು; ಸಂಕಟವೂ, ಹೆರುವ ಸ್ತ್ರೀಯ ಹಾಗೆ ನೋವೂ ಅವನನ್ನು ಹಿಡಿದವು.</verse>
				<verse number="44">ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು; ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”</verse>
				<verse number="45">ಆದ್ದರಿಂದ ಯೆಹೋವ ದೇವರು ಬಾಬಿಲೋನಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, ಅವರು ಬಾಬಿಲೋನಿಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ; ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ಖಂಡಿತವಾಗಿ, ಅವುಗಳ ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು.</verse>
				<verse number="46">ಬಾಬಿಲೋನು ಶತ್ರುವಶ ಆಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುವುದು; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.</verse>
			</chapter>
			<chapter number="51">
				<verse number="1">ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಗೋ, ನಾನು ಬಾಬಿಲೋನಿಗೆ ವಿರೋಧವಾಗಿಯೂ, ನನಗೆದುರಾಗಿ ಎದ್ದಿರುವ ಲೇಬ್ ಕಾಮೈ ಪ್ರಜೆಗಳ ವಿರೋಧವಾಗಿಯೂ ನಾಶಕಾರಿಯಾದ ಗಾಳಿಬೀಸುವಂತೆ ಮಾಡುವೆನು.</verse>
				<verse number="2">ವಿದೇಶಿಯರನ್ನು ಬಾಬಿಲೋನಿಗೆ ಕಳುಹಿಸುವೆನು; ಅವರು ಅದನ್ನು ತೂರಿ ಅದರ ದೇಶವನ್ನು ಬರಿದು ಮಾಡುವರು; ಏಕೆಂದರೆ ದುರ್ದಿನದಲ್ಲಿ ಸುತ್ತಲಾಗಿ ಅದಕ್ಕೆ ವಿರೋಧವಾಗಿರುವರು.</verse>
				<verse number="3">ಬಿಲ್ಲು ಬಗ್ಗಿಸುವವನಿಗೆ ವಿರೋಧವಾಗಿಯೂ, ಕವಚದಲ್ಲಿ ತನ್ನನ್ನು ಹೆಚ್ಚಿಸಿಕೊಳ್ಳುವವನಿಗೆ ವಿರೋಧವಾಗಿಯೂ ಬಿಲ್ಲಿನವನು ತನ್ನ ಬಿಲ್ಲನ್ನು ಬಗ್ಗಿಸಲಿ; ಅದರ ಯೌವನಸ್ಥರನ್ನು ಕನಿಕರಿಸಬೇಡಿರಿ; ಅದರ ಸೈನ್ಯವನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿರಿ.</verse>
				<verse number="4">ಈ ಪ್ರಕಾರ ಬಾಬಿಲೋನಿಯರ ದೇಶದಲ್ಲಿ ಹತರಾಗಿ ಬೀಳುವರು. ಅದರ ಬೀದಿಗಳಲ್ಲಿಯೇ ಕತ್ತಿಗೆ ತುತ್ತಾಗುವರು.</verse>
				<verse number="5">ಏಕೆಂದರೆ ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಸೇನಾಧೀಶ್ವರ ಯೆಹೋವ ದೇವರು ಇಸ್ರಾಯೇಲನ್ನಾಗಲಿ, ಯೆಹೂದವನ್ನಾಗಲಿ ಕೈಬಿಡಲಿಲ್ಲ.</verse>
				<verse number="6">“ಬಾಬಿಲೋನಿನೊಳಗಿಂದ ಓಡಿಹೋಗಿರಿ; ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಪಾಪದಲ್ಲಿ ನಾಶವಾಗಬೇಡಿರಿ; ಏಕೆಂದರೆ ಇದು ಯೆಹೋವ ದೇವರ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆ ಮುಯ್ಯಿ ಕೊಡುತ್ತಾನೆ.</verse>
				<verse number="7">ಬಾಬಿಲೋನ್ ಯೆಹೋವ ದೇವರ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದ್ದರಿಂದ ಜನಾಂಗಗಳು ಹುಚ್ಚರಾದರು.</verse>
				<verse number="8">ಇದ್ದಕ್ಕಿದ್ದ ಹಾಗೆ ಬಾಬಿಲೋನ್ ಬಿದ್ದು ಹಾಳಾಗಿದೆ; ಅದರ ವಿಷಯ ಗೋಳಾಡಿರಿ; ಅದರ ನೋವಿಗೆ ತೈಲ ತೆಗೆದುಕೊಳ್ಳಿರಿ; ಒಂದು ವೇಳೆ ವಾಸಿಯಾದೀತು.</verse>
				<verse number="9">“ ‘ನಾವು ಬಾಬಿಲೋನನ್ನು ವಾಸಿಮಾಡಲು ಪ್ರಯತ್ನಿಸಿದೆವು; ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳವರೆಗೂ ಏರುತ್ತದೆ.’</verse>
				<verse number="10">“ ‘ಯೆಹೋವ ದೇವರು ನಮ್ಮ ನೀತಿಯನ್ನು ಹೊರಗೆ ತಂದಿದ್ದಾರೆ; ಬನ್ನಿ, ನಮ್ಮ ದೇವರಾದ ಯೆಹೋವ ದೇವರ ಕ್ರಿಯೆಯನ್ನು ಚೀಯೋನಿನಲ್ಲಿ ಸಾರಿ ಹೇಳೋಣ.’</verse>
				<verse number="11">“ಬಾಣಗಳನ್ನು ಮೆರುಗು ಮಾಡಿರಿ; ಡಾಲುಗಳನ್ನು ಎತ್ತಿಕೊಳ್ಳಿರಿ, ಯೆಹೋವ ದೇವರು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾರೆ; ಆತನ ಆಲೋಚನೆ ಬಾಬಿಲೋನಿಗೆ ವಿರೋಧವಾಗಿ ಅದನ್ನು ನಾಶಮಾಡುವುದಕ್ಕೆ ಇದೆ. ಏಕೆಂದರೆ ಇದು ಯೆಹೋವ ದೇವರ ಪ್ರತಿದಂಡನೆಯು, ಅವರ ದೇವಾಲಯದ ಪ್ರತಿದಂಡನೆಯಾಗಿದೆ.</verse>
				<verse number="12">ಬಾಬಿಲೋನಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ; ಪಹರೆಯನ್ನು ಬಲಪಡಿಸಿರಿ; ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿಕೊಳ್ಳುವವರನ್ನು ಸಿದ್ಧಮಾಡಿರಿ; ಏಕೆಂದರೆ ಯೆಹೋವ ದೇವರು ಬಾಬಿಲೋನಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿದ್ದನ್ನು ಮಾಡಿದ್ದಾರೆ.</verse>
				<verse number="13">ಅನೇಕ ನೀರುಗಳ ಬಳಿಯಲ್ಲಿ ವಾಸವಾಗಿರುವವಳೇ, ಬಹಳ ದ್ರವ್ಯಗಳುಳ್ಳವಳೇ, ನಿನ್ನ ಅಂತ್ಯವೂ, ನಿನ್ನ ನಾಶನದ ಕಾಲವು ಬಂತು.</verse>
				<verse number="14">ಸೇನಾಧೀಶ್ವರ ಯೆಹೋವ ದೇವರು ತಮ್ಮ ಮೇಲೆ ಆಣೆಯಿಟ್ಟು: ನಿಶ್ಚಯವಾಗಿ ನಾನು ಮಿಡತೆಗಳಷ್ಟು ಅಸಂಖ್ಯ ಜನರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧವಾಗಿ ಆರ್ಭಟವನ್ನು ಎತ್ತುವರು.</verse>
				<verse number="15">“ಅವರು ತಮ್ಮ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿ, ತಮ್ಮ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತಮ್ಮ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾರೆ.</verse>
				<verse number="16">ಅವರ ಗರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ, ಅವರು ಭೂಮಿಯ ಕಟ್ಟಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಗೋಸ್ಕರ ಮಿಂಚನ್ನು ಉಂಟುಮಾಡುತ್ತಾರೆ; ತಮ್ಮ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾರೆ.</verse>
				<verse number="17">“ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ; ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ; ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ; ಅವುಗಳಲ್ಲಿ ಉಸಿರೇ ಇಲ್ಲ.</verse>
				<verse number="18">ಅವು ವ್ಯರ್ಥ, ಹಾಸ್ಯಾಸ್ಪದದ ಕೆಲಸ; ಅವುಗಳ ದಂಡನೆಯ ಕಾಲದಲ್ಲಿ ಅವು ನಾಶವಾಗುವುವು.</verse>
				<verse number="19">ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ; ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ.</verse>
				<verse number="20">“ನೀನು ನನ್ನ ಗದೆಯೂ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರುಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ.</verse>
				<verse number="21">ನಿನ್ನಿಂದ ಕುದುರೆಯನ್ನೂ, ಅದರ ಮೇಲೆ ಹತ್ತಿದವನನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ರಥವನ್ನೂ, ಅದರಲ್ಲಿ ಸವಾರಿ ಮಾಡುವವನನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ.</verse>
				<verse number="22">ನಿನ್ನಿಂದ ಗಂಡಸರನ್ನೂ, ಹೆಂಗಸರನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ಹಿರಿಯರನ್ನೂ, ಕಿರಿಯರನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ಯುವಕನನ್ನೂ ಯುವತಿಯನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ.</verse>
				<verse number="23">ನಿನ್ನಿಂದ ಕುರುಬನನ್ನೂ ಅವನ ಮಂದೆಯನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ಒಕ್ಕಲಿಗನನ್ನೂ ಅವನ ನೊಗದ ಎತ್ತುಗಳನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ; ನಿನ್ನಿಂದ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ.</verse>
				<verse number="24">“ಬಾಬಿಲೋನಿನವರು ಮತ್ತು ಕಸ್ದೀಯರು ಚೀಯೋನಿನಲ್ಲಿ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಮುಯ್ಯಿತೀರಿಸುವೆನು” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="25">“ಲೋಕವನ್ನೆಲ್ಲಾ ನಾಶಮಾಡುವ ನಾಶಕ ಪರ್ವತವೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. “ನಿನ್ನ ಮೇಲೆ ನನ್ನ ಕೈಯನ್ನು ಚಾಚಿ, ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ, ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.</verse>
				<verse number="26">ಒಬ್ಬರೂ ನಿನ್ನಿಂದ ಮೂಲೆಯ ಕಲ್ಲನ್ನಾಗಲಿ, ಅಸ್ತಿವಾರದ ಕಲ್ಲನ್ನಾಗಲಿ ತೆಗೆಯರು. ನೀನು ಎಂದೆಂದಿಗೂ ಹಾಳಾಗುವೆ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="27">“ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರಾರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆಗಳನ್ನು ಬರಮಾಡಿರಿ.</verse>
				<verse number="28">ಅದಕ್ಕೆ ವಿರೋಧವಾಗಿ ಜನಾಂಗಗಳನ್ನೂ, ಮೇದ್ಯರ ಅರಸರನ್ನೂ, ಅದರ ಅಧಿಪತಿಗಳನ್ನೂ, ಅಧಿಕಾರಿಗಳನ್ನೂ, ಅವನ ರಾಜ್ಯದ ದೇಶವನ್ನೆಲ್ಲಾ ಸಿದ್ಧಮಾಡಿರಿ.</verse>
				<verse number="29">ಆಗ ದೇಶವು ನೊಂದು ನಡುಗುವುದು. ಏಕೆಂದರೆ ಬಾಬಿಲೋನ್ ದೇಶವು ನಿರ್ಜನವಾಗಲಿ ಎಂದು ಅದರ ವಿರೋಧವಾಗಿ ಯೆಹೋವ ದೇವರ ಉದ್ದೇಶಗಳು ಸ್ಥಿರವಾಗಿವೆ.</verse>
				<verse number="30">ಬಾಬಿಲೋನಿನ ಪರಾಕ್ರಮಶಾಲಿಗಳು ಯುದ್ಧಮಾಡುವುದನ್ನು ಬಿಟ್ಟಿದ್ದಾರೆ; ಅವರ ಭದ್ರಸ್ಥಾನಗಳಲ್ಲಿ ನಿಂತಿದ್ದಾರೆ. ಅವರ ಪರಾಕ್ರಮತನ ತಪ್ಪಿತು; ಅವರು ಬಲಹೀನರಾಗಿದ್ದಾರೆ. ಆ ದೇಶದ ನಿವಾಸಗಳನ್ನು ಸುಟ್ಟಿದ್ದಾರೆ; ಅದರ ಹೆಬ್ಬಾಗಿಲುಗಳು ಮುರಿದುಹೋಗಿವೆ.</verse>
				<verse number="31">ಒಬ್ಬ ಸುದ್ದಿಗಾರ ಇನ್ನೊಬ್ಬ ಸುದ್ದಿಗಾರನ ಕಡೆ ಓಡುತ್ತಾನೆ. ಒಬ್ಬ ದೂತ ಇನ್ನೊಬ್ಬ ದೂತನ ಕಡೆಗೆ ಓಡಿಹೋಗಿ, ಬಾಬಿಲೋನಿನ ಅರಸನಿಗೆ ಈ ಸಮಾಚಾರವನ್ನು ತಿಳಿಸುತ್ತಾನೆ, ನಿನ್ನ ರಾಜಧಾನಿಯನ್ನು ಎಲ್ಲಾ ಕಡೆಯಿಂದ ಆಕ್ರಮಿಸಿದ್ದಾರೆ,</verse>
				<verse number="32">ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡು ಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ.”</verse>
				<verse number="33">ಏಕೆಂದರೆ ಇಸ್ರಾಯೇಲಿನ ದೇವರೂ, ಸರ್ವಶಕ್ತರಾಗಿರುವ ಯೆಹೋವ ದೇವರೂ ಹೇಳುವುದೇನೆಂದರೆ: “ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬಿಲೋನಿನ ಮಗಳು ಇದ್ದಾಳೆ. ಇನ್ನು ಸ್ವಲ್ಪ ಕಾಲವಾದ ಮೇಲೆ ಅವಳಿಗೆ ಸುಗ್ಗಿಕಾಲ ಬರುವುದು.”</verse>
				<verse number="34">“ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಮ್ಮನ್ನು ನುಂಗಿಬಿಟ್ಟಿದ್ದಾನೆ. ನಮ್ಮನ್ನು ಜಜ್ಜಿದ್ದಾನೆ. ನಮ್ಮನ್ನು ಬರೀ ಪಾತ್ರೆಯಾಗಿ ಮಾಡಿದ್ದಾನೆ. ಘಟಸರ್ಪದ ಹಾಗೆ ನಮ್ಮನ್ನು ನುಂಗಿಬಿಟ್ಟಿದ್ದಾನೆ. ನಮ್ಮನ್ನು ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ. ನಮ್ಮನ್ನು ಉಗುಳಿಬಿಟ್ಟಿದ್ದಾನೆ.</verse>
				<verse number="35">ನಮಗೂ, ನಮ್ಮ ಶರೀರಕ್ಕೂ ಮಾಡಿರುವ ಬಲಾತ್ಕಾರವು ಬಾಬಿಲೋನಿನ ಮೇಲೆ ಇರಲಿ,” ಎಂದು ಚೀಯೋನ್ ನಿವಾಸಿಗಳು ಹೇಳುತ್ತಾರೆ; “ಕಸ್ದೀಯರ ನಿವಾಸಿಗಳ ಮೇಲೆ ನನ್ನ ರಕ್ತವು ಇರಲಿ,” ಎಂದು ಯೆರೂಸಲೇಮು ಹೇಳುವುದು.</verse>
				<verse number="36">ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ. “ಇಗೋ, ನಾನು ನಿನ್ನ ನಿಮಿತ್ತ ವ್ಯಾಜ್ಯವಾಡುತ್ತೇನೆ. ನಿನಗೋಸ್ಕರ ಪ್ರತಿದಂಡನೆ ಮಾಡುತ್ತೇನೆ. ಅದರ ಸಮುದ್ರವನ್ನು ಒಣಗಿಸುತ್ತೇನೆ. ಅದರ ಬುಗ್ಗೆಯನ್ನು ಬತ್ತಿಹೋಗುವಂತೆ ಮಾಡುತ್ತೇನೆ.</verse>
				<verse number="37">ಬಾಬಿಲೋನ್ ದಿಬ್ಬಗಳಾಗುವುದು. ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವಾಗಿ ಆಶ್ಚರ್ಯಕ್ಕೂ, ನಾಶಕ್ಕೂ, ಸಿಳ್ಳಿಡುವಿಕೆಗೂ ಒಳಗಾಗುವುದು.</verse>
				<verse number="38">ಅವರು ಸಿಂಹಗಳ ಹಾಗೆ ಒಟ್ಟಾಗಿ ಗರ್ಜಿಸುವರು. ಸಿಂಹಗಳ ಮರಿಗಳ ಹಾಗೆ ಶಬ್ದಮಾಡುವರು.</verse>
				<verse number="39">ಅವರು ಉರಿಗೊಂಡಿರುವಾಗ, ನಾನು ಅವರಿಗೆ ಔತಣವನ್ನು ಸಿದ್ಧಪಡಿಸಿ, ಅವರು ಅದರಿಂದ ಸಂಭ್ರಮಪಟ್ಟು, ಎಂದಿಗೂ ಎಚ್ಚರಗೊಳ್ಳದೆ, ದೀರ್ಘ ನಿದ್ರೆ ಮಾಡುವಂತೆ ತಲೆಗೇರುವತನಕ ಕುಡಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="40">“ಕುರಿ, ಟಗರು, ಹೋತಗಳ ಹಾಗೆ ಅವರನ್ನು ವಧ್ಯಸ್ಥಾನಕ್ಕೆ ಬರಮಾಡುವೆನು. ಇದು ಯೆಹೋವನಾದ ನನ್ನ ನುಡಿ.</verse>
				<verse number="41">“ಶೇಷಕ್ ಹೇಗೆ ಶತ್ರುವಶವಾಗಿದೆ, ಸಮಸ್ತ ಭೂಮಿಯ ಹೊಗಳಿಕೆಯು ಆಶ್ಚರ್ಯಗೊಂಡಿದೆ; ಬಾಬಿಲೋನ್ ಜನಾಂಗಗಳೊಳಗೆ ಹೇಗೆ ಎಷ್ಟು ನಿರ್ಜನವಾಯಿತು!</verse>
				<verse number="42">ಸಮುದ್ರವೇ ಬಾಬಿಲೋನಿನ ಮೇಲೆ ನುಗ್ಗಿಬಿಟ್ಟಿದೆ, ಲೆಕ್ಕವಿಲ್ಲದೆ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ.</verse>
				<verse number="43">ಕಾಡು, ಕಗ್ಗಾಡು, ಬೆಂಗಾಡು ಆಗಿವೆ ಅದರ ನಗರಗಳು. ಆ ದೇಶದೊಳು ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು.</verse>
				<verse number="44">ಏಕೆಂದರೆ ನಾನು ಬಾಬಿಲೋನಿನಲ್ಲಿರುವ ಬೇಲ್‌ನನ್ನು ದಂಡಿಸಿ, ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ಕಕ್ಕಿಸುವೆನು. ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವುದಿಲ್ಲ. ಹೌದು, ಬಾಬಿಲೋನಿನ ಗೋಡೆ ಬೀಳುವುದು.</verse>
				<verse number="45">“ನನ್ನ ಜನರೇ, ಅದರೊಳಗಿಂದ ಹೊರಡಿರಿ. ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ಯೆಹೋವ ದೇವರ ಕೋಪಕ್ಕೆ ತಪ್ಪಿಸಿರಿ.</verse>
				<verse number="46">ನಿಮ್ಮ ಹೃದಯವು ಕುಂದದ ಹಾಗೆ ದೇಶದಲ್ಲಿ ಕಿವಿಗೆ ಬೀಳುವ ಸುದ್ದಿಗೆ ನೀವು ಭಯಪಡದ ಹಾಗೆ, ಒಂದು ವರ್ಷದಲ್ಲಿ ಒಂದು ಸುದ್ದಿಯೂ ಇನ್ನೊಂದು ವರ್ಷದಲ್ಲಿ ಇನ್ನೊಂದು ಸುದ್ದಿಯೂ ಬರುವುದು. ದೇಶದಲ್ಲಿ ಬಲಾತ್ಕಾರವಿರುವುದು, ಆಳುವವನು ಆಳುವವನಿಗೆ ವಿರೋಧವಾಗಿರುವನು.</verse>
				<verse number="47">ಆದ್ದರಿಂದ ಇಗೋ, ದಿನಗಳು ಬರುವುವು. ಆಗ ನಾನು ಬಾಬಿಲೋನಿನ ವಿಗ್ರಹಗಳಿಗೆ ದಂಡಿಸುವೆನು. ಆದರೆ ದೇಶವೆಲ್ಲಾ ನಾಚಿಕೆಪಡುವುದು. ಹತರಾದವರ ದೇಹಗಳು ಅದರ ಮಧ್ಯದಲ್ಲಿ ಅಲ್ಲಿ ಇಲ್ಲಿ ಬಿದ್ದಿವೆ.</verse>
				<verse number="48">ಆಗ ಭೂಮಿ ಆಕಾಶಗಳೂ, ಅಲ್ಲಿನ ಸಮಸ್ತವೂ ಬಾಬಿಲೋನಿನ ನಾಶವನ್ನು ನೋಡಿ ಜಯಘೋಷ ಮಾಡುವುವು. ಹಾಳುಮಾಡುವರು, ಉತ್ತರದಿಂದ ಬಂದು ಹಾಳುಮಾಡುವರು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="49">“ಬಾಬಿಲೋನ್‌ನಿಂದಾಗಿ ಭೂಮಿಯಲ್ಲೆಲ್ಲಾ ಹತರಾದಂತೆಯೇ, ಇಸ್ರಾಯೇಲಿನ ಹತ್ಯೆಯಿಂದಾಗಿ ಬಾಬಿಲೋನ್ ಬೀಳಬೇಕು.</verse>
				<verse number="50">ಖಡ್ಗದಿಂದ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ. ದೂರದಲ್ಲಿ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.”</verse>
				<verse number="51">“ನಾಚಿಕೆ ಪಡುತ್ತೇವೆ, ಏಕೆಂದರೆ ನಿಂದೆಯನ್ನು ಕೇಳಿದ್ದೇವೆ. ಅವಮಾನ ನಿಮ್ಮ ಮುಖಗಳನ್ನು ಮುಚ್ಚಿದೆ. ಏಕೆಂದರೆ ವಿದೇಶಿಗಳು ಯೆಹೋವ ದೇವರ ಆಲಯದ ಪರಿಶುದ್ಧ ಸ್ಥಳಗಳಲ್ಲಿ ಪ್ರವೇಶಿಸಿದ್ದಾರೆ.”</verse>
				<verse number="52">“ಇಗೋ, ಅಂಥ ದಿನಗಳು ಬರುತ್ತವೆ,” ಎಂದು ಯೆಹೋವ ದೇವರು ಹೇಳುತ್ತಾರೆ, “ಅದು ನಾನು ಬಾಬಿಲೋನಿನ ವಿಗ್ರಹಗಳನ್ನು ದಂಡಿಸುವ ದಿನಗಳು. ಆಗ ಆ ದೇಶದೊಳೆಲ್ಲ ಗಾಯಪಟ್ಟವರು ನರಳಾಡುವರು.</verse>
				<verse number="53">ಬಾಬಿಲೋನ್ ಆಕಾಶಕ್ಕೆ ಏರಿದರೂ, ಅದರ ಬಲದ ಉನ್ನತಸ್ಥಾನವನ್ನು ಭದ್ರಮಾಡಿದರೂ, ಸೂರೆಮಾಡುವವರು ನನ್ನಿಂದ ಅವಳಿಗೆ ವಿರೋಧವಾಗಿ ಬರುವರು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="54">“ಬಾಬಿಲೋನಿನಿಂದ ಕೂಗುವ ಶಬ್ದವು! ಕಸ್ದೀಯರ ದೇಶದಿಂದ ದೊಡ್ಡ ನಾಶದ ಶಬ್ದವೂ ಬರುವುದು.</verse>
				<verse number="55">ಏಕೆಂದರೆ ಯೆಹೋವ ದೇವರು ಬಾಬಿಲೋನನ್ನು ಸೂರೆಮಾಡಿದ್ದಾರೆ; ಅವಳೊಳಗಿಂದ ಮಹಾ ಶಬ್ದವನ್ನು ತೆಗೆದುಹಾಕಿದ್ದಾರೆ; ಅವಳ ತೆರೆಗಳು ನೀರಿನ ಹಾಗೆ ಘೋಷಿಸುವಾಗ, ಅವುಗಳ ಶಬ್ದದ ಧ್ವನಿಯು ಹೊರಟಿತು.</verse>
				<verse number="56">ಏಕೆಂದರೆ ವಿನಾಶ ಮಾಡುವವನು ಅದರ ಮೇಲೆ ಅಂದರೆ ಬಾಬಿಲೋನಿನ ಮೇಲೆಯೇ ಬಂದಿದ್ದಾನೆ. ಅದರ ಪರಾಕ್ರಮಶಾಲಿಗಳು ಸೆರೆಯಾಗಿಬಿಟ್ಟಿದ್ದಾರೆ. ಅವಳ ಬಿಲ್ಲುಗಳು ಮುರಿದುಹೋಗಿವೆ. ಏಕೆಂದರೆ ಪ್ರತಿದಂಡನೆಗಳ ದೇವರಾದ ಯೆಹೋವ ದೇವರು ನಿಶ್ಚಯವಾಗಿ ಮುಯ್ಯಿಗೆ ಮುಯ್ಯಿ ತೀರಿಸುವರು.</verse>
				<verse number="57">ಇದಲ್ಲದೆ ನಾನು ಅವಳ ಪ್ರಧಾನರನ್ನೂ, ಅವಳ ಜ್ಞಾನಿಗಳನ್ನೂ, ಅವಳ ಅಧಿಪತಿಗಳನ್ನೂ, ಅವಳ ಅಧಿಕಾರಿಗಳನ್ನೂ, ಅವಳ ಪರಾಕ್ರಮಶಾಲಿಗಳನ್ನೂ ಮತ್ತರಾಗಿ ಮಾಡುತ್ತೇನೆ. ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಎಂಬ ಹೆಸರುಳ್ಳ ರಾಜಾಧಿರಾಜರು ಸಾರುತ್ತಾರೆ.</verse>
				<verse number="58">ಮಾತ್ರವಲ್ಲದೆ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: “ಬಾಬಿಲೋನಿನ ಅಗಲವಾದ ಪೌಳಿಗೋಡೆ ಪೂರ್ಣವಾಗಿ ನೆಲಸಮವಾಗುವುದು. ಅವಳ ಎತ್ತರವಾದ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗುವುವು; ಜನರು ವ್ಯರ್ಥಕ್ಕಾಗಿಯೂ, ಪ್ರಜೆಗಳು ಬೆಂಕಿಗಾಗಿಯೂ ಕಷ್ಟಪಟ್ಟು ಆಯಾಸಪಡುವರು.”</verse>
				<verse number="59">ಪ್ರವಾದಿಯಾದ ಯೆರೆಮೀಯನು ಮಹ್ಸೇಯನ ಮಗನಾದ ನೇರೀಯನ ಮಗ ಸೆರಾಯನಿಗೆ, ಅವನು ಯೆಹೂದದ ಅರಸನಾದ ಚಿದ್ಕೀಯನ ಸಂಗಡ, ಇವನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬಿಲೋನಿಗೆ ಹೋದಾಗ ಆಜ್ಞಾಪಿಸಿದ ವಾಕ್ಯವು. ಆ ಸೆರಾಯನು ಅಂಗರಕ್ಷಕ ಸೇನೆಯ ನಾಯಕನಾಗಿದ್ದನು.</verse>
				<verse number="60">ಹೀಗೆ ಯೆರೆಮೀಯನು ಬಾಬಿಲೋನಿನ ಮೇಲೆ ಬರುವ ಕೇಡನ್ನೆಲ್ಲಾ ಬಾಬಿಲೋನಿಗೆ ವಿರೋಧವಾಗಿ ಬರೆದಿರುವ ಈ ವಾಕ್ಯಗಳನ್ನೆಲ್ಲಾ ಒಂದು ಗ್ರಂಥದಲ್ಲಿ ಬರೆದನು.</verse>
				<verse number="61">ಯೆರೆಮೀಯನು ಸೆರಾಯನಿಗೆ ಹೇಳಿದ್ದೇನೆಂದರೆ, “ನೀನು ಬಾಬಿಲೋನಿಗೆ ಬಂದು</verse>
				<verse number="62">ಈ ವಾಕ್ಯಗಳನ್ನೆಲ್ಲಾ ಓದುತ್ತಿರುವಾಗ ಹೇಳತಕ್ಕದ್ದೇನೆಂದರೆ, ‘ಓ ಯೆಹೋವ ದೇವರೇ, ಈ ಸ್ಥಳಕ್ಕೆ ವಿರೋಧವಾಗಿ ಅದರಲ್ಲಿ ಮನುಷ್ಯರಾಗಲಿ, ಮೃಗಗಳಾಗಲಿ, ನಿವಾಸಿಗಳಾಗಲಿ ಎಂದಿಗೂ ಇರದಂತೆ, ಅದು ಸದಾಕಾಲ ಹಾಳಾಗಿಯೇ ಉಳಿಯಲಿ,’ ಎಂದು ನೀವೇ ಮಾತನಾಡ್ದಿದೀರಿ.</verse>
				<verse number="63">ನೀನು ಈ ಗ್ರಂಥವನ್ನು ಓದಿ ಮುಗಿಸಿದ ಮೇಲೆ, ಅದಕ್ಕೆ ಕಲ್ಲು ಕಟ್ಟಿ, ಅದನ್ನು ಯೂಫ್ರೇಟೀಸಿನ ಮಧ್ಯದಲ್ಲಿ ಬಿಸಾಡಿ,</verse>
				<verse number="64">ಹೀಗೆ ಹೇಳು, ‘ಈ ಪ್ರಕಾರ ಬಾಬಿಲೋನ್ ಮುಳುಗಿ ಹೋಗುವುದು. ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು. ಅವರು ಬೀಳುವರು.’ ” ಇಲ್ಲಿಯ ತನಕ ಯೆರೆಮೀಯನ ವಾಕ್ಯಗಳು.</verse>
			</chapter>
			<chapter number="52">
				<verse number="1">ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್.</verse>
				<verse number="2">ಅವನು ಯೆಹೋಯಾಕೀಮನು ಮಾಡಿದಂತೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.</verse>
				<verse number="3">ಯೆಹೋವ ದೇವರ ಕೋಪದಿಂದ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಇವೆಲ್ಲ ಉಂಟಾದವು. ಹೀಗೆ ಯೆಹೋವ ದೇವರು ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಟ್ಟರು. ಚಿದ್ಕೀಯನು ಬಾಬಿಲೋನಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.</verse>
				<verse number="4">ಅವನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿವಸದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ತನ್ನ ಸಮಸ್ತ ಸೈನ್ಯ ಸಮೇತ ಯೆರೂಸಲೇಮಿಗೆ ವಿರೋಧವಾಗಿ ಬಂದು, ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ಮಣ್ಣಿನ ದಿಬ್ಬಗಳನ್ನು ಮಾಡಿಸಿದನು.</verse>
				<verse number="5">ಈ ಪ್ರಕಾರ ಅರಸನಾದ ಚಿದ್ಕೀಯನ ಹನ್ನೊಂದನೆಯ ವರ್ಷದವರೆಗೆ ಪಟ್ಟಣಕ್ಕೆ ಮುತ್ತಿಗೆಹಾಕಿದನು.</verse>
				<verse number="6">ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿವಸದಲ್ಲಿ ಪಟ್ಟಣದಲ್ಲಿ ಕ್ಷಾಮವು ಬಲವಾದದ್ದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.</verse>
				<verse number="7">ಆಗ ಪಟ್ಟಣದ ಗೋಡೆ ಮುರಿಯಲಾಯಿತು. ಸೈನಿಕರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಇದ್ದ ಬಾಗಿಲಿನ ಮಾರ್ಗವಾಗಿ ಹೊರಟು, ಬಾಬಿಲೋನಿನವರು ಪಟ್ಟಣದ ಬಳಿಯಲ್ಲಿ ಇದ್ದದ್ದರಿಂದ ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.</verse>
				<verse number="8">ಆಗ ಬಾಬಿಲೋನಿಯರ ದಂಡು ಅರಸನಾದ ಚಿದ್ಕೀಯನನ್ನು ಯೆರಿಕೋವಿನ ಬಯಲಿನಲ್ಲಿ ಹಿಂದಟ್ಟಿದರು; ಅಷ್ಟರಲ್ಲಿ ಅವನ ಸೈನಿಕರೆಲ್ಲ ಅವನನ್ನು ಬಿಟ್ಟು ಚದರಿಹೋಗಿದ್ದರು.</verse>
				<verse number="9">ಅನಂತರ ಬಾಬಿಲೋನಿಯರು ಚಿದ್ಕೀಯನನ್ನು ಹಿಡಿದರು. ಅವನನ್ನು ಹಮಾತ್ ನಾಡಿನ ರಿಬ್ಲದಲ್ಲಿರುವ ತಮ್ಮ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ತೆಗೆದುಕೊಂಡು ಬಂದು, ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.</verse>
				<verse number="10">ಆ ಬಾಬಿಲೋನಿಯದ ಅರಸನು ಅಲ್ಲೇ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದನು. ಯೆಹೂದದ ಎಲ್ಲಾ ಪದಾಧಿಕಾರಿಗಳನ್ನು ರಿಬ್ಲದಲ್ಲಿ ಕೊಲ್ಲಿಸಿದನು.</verse>
				<verse number="11">ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಅವನಿಗೆ ಬೇಡಿಹಾಕಿಸಿ, ಬಾಬಿಲೋನಿಗೆ ತೆಗೆದುಕೊಂಡುಹೋಗಿ, ಜೀವನಾವಧಿಯವರೆಗೆ ಅವನನ್ನು ಸೆರೆಯಲ್ಲಿಟ್ಟನು.</verse>
				<verse number="12">ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದ ಐದನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಬಾಬಿಲೋನಿನ ಅರಸನ ಸೇವಕನೂ, ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂಸಲೇಮಿಗೆ ಬಂದು,</verse>
				<verse number="13">ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ, ಯೆರೂಸಲೇಮಿನಲ್ಲಿರುವ ಸಮಸ್ತ ಮನೆಗಳನ್ನೂ, ಪ್ರತಿ ದೊಡ್ಡಮನುಷ್ಯರ ಮನೆಗಳನ್ನೂ ಬೆಂಕಿಯಿಂದ ಸುಟ್ಟುಬಿಟ್ಟನು.</verse>
				<verse number="14">ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಬಾಬಿಲೋನಿಯರ ಸೈನ್ಯದವರೆಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆಗಳನ್ನು ಕೆಡವಿಬಿಟ್ಟರು.</verse>
				<verse number="15">ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವರಾದ ಕೆಲವರನ್ನೂ, ಪಟ್ಟಣದಲ್ಲಿ ಉಳಿದ ಜನರನ್ನೂ, ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನೂ, ಬೇರೆ ಎಲ್ಲಾ ಜನರನ್ನೂ ಸೆರೆಯಾಗಿ ಒಯ್ದನು.</verse>
				<verse number="16">ಆದರೆ ನೆಬೂಜರದಾನನು ಹೊಲಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಬೇಸಾಯ ಮಾಡುವದಕ್ಕಾಗಿ ದೇಶದ ಜನರಲ್ಲಿ ಕೇವಲ ಬಡವರನ್ನು ಮಾತ್ರ ಬಿಟ್ಟುಹೋದನು.</verse>
				<verse number="17">ಯೆಹೋವ ದೇವರ ಆಲಯದಲ್ಲಿದ್ದ ಕಂಚಿನ ಸ್ತಂಭಗಳನ್ನೂ, ಪೀಠಗಳನ್ನೂ, ಕಂಚಿನ ಸಮುದ್ರವೆಂಬ ಪಾತ್ರೆಯನ್ನೂ ಬಾಬಿಲೋನಿಯರು ಒಡೆದುಹಾಕಿ, ಅದರ ಎಲ್ಲಾ ಕಂಚನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.</verse>
				<verse number="18">ಇದಲ್ಲದೆ ಅವರು ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಸಾಂಬ್ರಾಣಿಕಳಸ ಮತ್ತು ಸಮಸ್ತ ಕಂಚಿನ ಸಲಕರಣೆಗಳನ್ನೂ ತೆಗೆದುಕೊಂಡು ಹೋದರು.</verse>
				<verse number="19">ಕಾವಲುಗಾರರ ಅಧಿಪತಿಯು ಬೋಗುಣಿಗಳನ್ನೂ, ಅಗ್ನಿ ಪಾತ್ರೆಗಳನ್ನೂ, ಬಟ್ಟಲುಗಳನ್ನೂ ಬೋಗುಣಿಗಳನ್ನೂ, ದೀಪಸ್ತಂಭಗಳನ್ನೂ, ಸೌಟುಗಳನ್ನೂ, ಪಾನಾರ್ಪಣೆಯ ಪಾತ್ರೆ ಬಂಗಾರ ಬೆಳ್ಳಿಗಳಿಂದ ಮಾಡಿದ ಎಲ್ಲವನ್ನೂ ತೆಗೆದುಕೊಂಡನು.</verse>
				<verse number="20">ಅರಸನಾದ ಸೊಲೊಮೋನನು ಯೆಹೋವ ದೇವರ ಆಲಯಕ್ಕಾಗಿ ಮಾಡಿಸಿದ್ದ ಎರಡು ಕಂಬಗಳು, ನೀರನ್ನು ಸಂಗ್ರಹಿಸಲು ಮಾಡಿದ ದೊಡ್ಡ ಕಂಚಿನ ಪಾತ್ರೆ, ಪೀಠಗಳನ್ನು ಹೊರುವ ಹನ್ನೆರಡು ಕಂಚಿನ ಹೋರಿಗಳು, ಇವುಗಳನ್ನು ಮಾಡುವುದಕ್ಕೆ ತೂಕ ಮಾಡಲಾರದಷ್ಟು ಕಂಚು ಹಿಡಿದಿತ್ತು.</verse>
				<verse number="21">ಕಂಬಗಳಲ್ಲಿ ಮೊದಲನೆಯ ಕಂಬ ಎಂಟು ಮೀಟರ್ ಎತ್ತರವಿತ್ತು, ಅದರ ಸುತ್ತಳತೆ ಸುಮಾರು ಐದು ಮೀಟರ್.</verse>
				<verse number="22">ಕಂಬದ ಮೇಲೆ ಎತ್ತರವಾದ ಒಂದು ಕಂಚಿನ ಕುಂಭವಿತ್ತು, ಆ ಕುಂಭದ ಮೇಲೆ ಸುತ್ತಲೂ ಕಂಚಿನ ಜಾಲರಿ ಹಾಗೂ ದಾಳಿಂಬೆ ಹಣ್ಣುಗಳು ಇದ್ದವು. ಎರಡನೆಯ ಕಂಬವು ದಾಳಿಂಬೆ ಹಣ್ಣುಗಳಿಂದ ಹಾಗೆಯೇ ಅಲಂಕಾರವಾಗಿತ್ತು.</verse>
				<verse number="23">ನಾಲ್ಕು ಪಕ್ಕಗಳಲ್ಲಿ ತೊಂಬತ್ತಾರು ದಾಳಿಂಬೆ ಹಣ್ಣುಗಳಿದ್ದವು. ಜಾಲರಿಯ ಮೇಲೆ ಸುತ್ತಲೂ ಒಟ್ಟಿಗೆ ನೂರು ದಾಳಿಂಬೆ ಹಣ್ಣುಗಳಿದ್ದವು.</verse>
				<verse number="24">ಕಾವಲುಗಾರರ ಅಧಿಪತಿಯು ಮುಖ್ಯಯಾಜಕನಾದ ಸೆರಾಯನನ್ನೂ, ಎರಡನೆಯ ಯಾಜಕನಾದ ಚೆಫನ್ಯನನ್ನೂ, ಮೂವರು ದ್ವಾರಪಾಲಕರನ್ನೂ ಹಿಡಿದುಕೊಂಡು ಹೋದನು.</verse>
				<verse number="25">ಇದಲ್ಲದೆ ಪಟ್ಟಣದೊಳಗಿಂದ ಸೈನಿಕರ ಮೇಲಿದ್ದ ಒಬ್ಬ ಅಧಿಕಾರಿಯನ್ನೂ, ಅರಸನ ಏಳುಮಂದಿ ಸಲಹೆಗಾರರನ್ನೂ, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಮಾಡುವ ಸೇನಾಧಿಪತಿಯ ಲೇಖಕನನ್ನೂ, ಪಟ್ಟಣದ ಮಧ್ಯದಲ್ಲಿ ಸಿಕ್ಕಿದ ದೇಶದ ಜನರಲ್ಲಿ ಅರವತ್ತು ಮಂದಿಯನ್ನೂ ತೆಗೆದುಕೊಂಡನು.</verse>
				<verse number="26">ಇವರನ್ನೆಲ್ಲಾ ಕಾವಲಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋಗಿ, ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು.</verse>
				<verse number="27">ಬಾಬಿಲೋನಿನ ಅರಸನು ಹಮಾತಿನ ರಿಬ್ಲದಲ್ಲಿ ಅವರನ್ನು ಕೊಂದುಹಾಕಿಸಿದನು. ಈ ಪ್ರಕಾರ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.</verse>
				<verse number="28">ನೆಬೂಕದ್ನೆಚ್ಚರನು ಸೆರೆಯಾಗಿ ಒಯ್ದ ಜನರ ಪಟ್ಟಿ ಹೀಗಿದೆ: ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಸೆರೆಗೊಯ್ದದ್ದು 3,023 ಮಂದಿ ಯೆಹೂದ್ಯರನ್ನು;</verse>
				<verse number="29">ನೆಬೂಕದ್ನೆಚ್ಚರನ ಹದಿನೆಂಟನೆಯ ವರ್ಷದಲ್ಲಿ 832 ಮಂದಿಯನ್ನು ಅವನು ಯೆರೂಸಲೇಮಿನಿಂದ ಸೆರೆಗೊಯ್ದನು;</verse>
				<verse number="30">ನೆಬೂಕದ್ನೆಚ್ಚರನು ಇಪ್ಪತ್ತು ಮೂರನೆಯ ವರ್ಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು 745 ಮಂದಿ ಯೆಹೂದ್ಯರನ್ನು ಸೆರೆಗೊಯ್ದನು. ಹೀಗೆ ಸೆರೆಯಾದವರ ಮೊತ್ತ 4,600 ಮಂದಿ.</verse>
				<verse number="31">ಯೆಹೂದದ ಅರಸನಾದ ಯೆಹೋಯಾಖೀನನ ಸೆರೆಯ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿವಸದಲ್ಲಿ ಆದದ್ದೇನೆಂದರೆ, ಬಾಬಿಲೋನಿನ ಅರಸನಾದ ಎವೀಲ್ಮೆರೋದಕನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ, ಅವನು ಯೆಹೂದದ ಅರಸನಾದ ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡಿಸಿದನು.</verse>
				<verse number="32">ಇದಲ್ಲದೆ ಅವನ ಸಂಗಡ ಪ್ರೀತಿಯಿಂದ ಮಾತನಾಡಿ, ತನ್ನ ಸಂಗಡ ಬಾಬೆಲಿನಲ್ಲಿದ್ದ ಎಲ್ಲಾ ಅರಸರಿಗಿಂತ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.</verse>
				<verse number="33">ಅವನ ಸೆರೆಯ ವಸ್ತ್ರಗಳನ್ನು ತೆಗೆದು ರಾಜವಸ್ತ್ರ ತೊಡಿಸಿದನು. ಹೀಗೆ ಯೆಹೋಯಾಖೀನನು ಬದುಕಿದ ಸಕಲ ದಿವಸಗಳಲ್ಲಿ ಅರಸನ ಪಂಕ್ತಿಯಲ್ಲಿಯೇ ಊಟಮಾಡುತ್ತಿದ್ದನು.</verse>
				<verse number="34">ಅವನ ಜೀವಿತ ಕಾಲವೆಲ್ಲಾ ಸಾಯುವ ತನಕ, ಅವನಿಗೆ ಬೇಕಾಗಿದ್ದ ಎಲ್ಲಾ ಪದಾರ್ಥಗಳು ಬಾಬಿಲೋನಿನ ಅರಸನಿಂದಲೇ ಪ್ರತಿನಿತ್ಯವೂ ದೊರಕುತ್ತಿದ್ದವು.</verse>
			</chapter>
		</book>
		<book number="25">
			<chapter number="1">
				<verse number="1">ಜನಭರಿತವಾಗಿದ್ದ ನಗರಿಯು ಹೇಗೆ ಬರಿದಾಗಿ ಹೋಗಿದೆ! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ, ಈಗ ಹೇಗೆ ವಿಧವೆಯಾಗಿದ್ದಾಳೆ! ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ, ಹೇಗೆ ಈಗ ದಾಸಿಯಂತಾಗಿದ್ದಾಳೆ!</verse>
				<verse number="2">ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ, ಆಕೆಯ ಕಣ್ಣೀರು, ಆಕೆಯ ಕೆನ್ನೆಗಳ ಮೇಲಿದೆ. ಆಕೆಯ ಎಲ್ಲಾ ಪ್ರಿಯರಲ್ಲಿ, ಆಕೆಯನ್ನು ಸಂತೈಸುವವರು ಒಬ್ಬರೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ, ಆಕೆಗೆ ವಂಚನೆಮಾಡಿ, ಆಕೆಗೆ ಶತ್ರುಗಳಾದರು.</verse>
				<verse number="3">ಯೆಹೂದವೆಂಬಾಕೆಯು ಸಂಕಟದ ನಿಮಿತ್ತವೂ, ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋದಳು. ಆಕೆಯು ಬೇರೆ ಜನಾಂಗಗಳೊಳಗೆ ವಾಸಮಾಡುವವಳಾಗಿ, ವಿಶ್ರಾಂತಿಯನ್ನು ಕಾಣಳು. ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.</verse>
				<verse number="4">ಚೀಯೋನಿನ ಮಾರ್ಗಗಳು ದುಃಖಿಸುತ್ತವೆ. ಏಕೆಂದರೆ ಆಕೆಯ ನಿರ್ಧರಿತ ಹಬ್ಬಗಳಿಗೆ ಯಾರೂ ಬರಲಿಲ್ಲ. ಆಕೆಯ ಎಲ್ಲಾ ಬಾಗಿಲುಗಳು ಹಾಳು ಬಿದ್ದಿವೆ. ಆಕೆಯ ಯಾಜಕರು ನರಳುತ್ತಾರೆ. ಆಕೆಯ ಕನ್ಯೆಯರು ದುಃಖಿಸುತ್ತಾರೆ. ಆಕೆಯು ಕಹಿ ವೇದನೆಯಲ್ಲಿದ್ದಾಳೆ.</verse>
				<verse number="5">ಆಕೆಯ ವೈರಿಗಳು ಆಕೆಯ ಯಜಮಾನರಾಗಿದ್ದಾರೆ. ಆಕೆಯ ಶತ್ರುಗಳು ನೆಮ್ಮದಿಯಿಂದ ಇದ್ದಾರೆ. ಏಕೆಂದರೆ ಆಕೆಯ ಅನೇಕ ಪಾಪಗಳ ನಿಮಿತ್ತ ಯೆಹೋವ ದೇವರು ಆಕೆಯನ್ನು ಸಂಕಟಪಡಿಸಿದ್ದಾರೆ. ಆಕೆಯ ಮಕ್ಕಳು ಶತ್ರುವಿನ ಮುಂದೆ ಸೆರೆಗೆ ಹೋಗಿದ್ದಾರೆ.</verse>
				<verse number="6">ಚೀಯೋನ್ ಪುತ್ರಿಯ ಎಲ್ಲಾ ವೈಭವವು ಅವಳನ್ನು ಬಿಟ್ಟುಹೋಯಿತು. ಅವಳ ಪ್ರಧಾನರು ಹುಲ್ಲುಗಾವಲು ಕಾಣದ ಜಿಂಕೆಗಳ ಹಾಗಾದರು, ಅವರು ಹಿಂದಟ್ಟುವವನ ಮುಂದೆ ತ್ರಾಣವಿಲ್ಲದವರ ಹಾಗೆ ಓಡಿಹೋದರು.</verse>
				<verse number="7">ಯೆರೂಸಲೇಮು ಕಷ್ಟದ ಮತ್ತು ಸಂಕಟದ ದಿನಗಳಲ್ಲಿ ಪೂರ್ವದಿನಗಳಲ್ಲಿ ತನಗಿದ್ದ ಸಂಪತ್ತೆಲ್ಲವನ್ನು ಜ್ಞಾಪಕ ಮಾಡಿಕೊಂಡಿದ್ದಾಳೆ. ಆಕೆಯ ಜನರು ಶತ್ರುವಿನ ಕೈಯಲ್ಲಿ ಬಿದ್ದಾಗ, ಅವಳಿಗೆ ಯಾರೂ ಸಹಾಯ ಮಾಡಲಿಲ್ಲ. ವೈರಿಗಳು ಅವಳನ್ನು ನೋಡಿ ಅವಳ ನಾಶನದ ವಿಷಯವಾಗಿ ಅಪಹಾಸ್ಯ ಮಾಡಿದರು.</verse>
				<verse number="8">ಯೆರೂಸಲೇಮು ಘೋರ ಪಾಪಮಾಡಿದೆ. ಆದ್ದರಿಂದ ಅವಳು ಅಶುದ್ಧಳಾಗಿದ್ದಾಳೆ. ಅವಳನ್ನು ಸನ್ಮಾನಿಸಿದವರೆಲ್ಲರೂ, ಅವಳನ್ನು ಹೀನೈಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ. ಹೌದು, ಅವಳು ನರಳುತ್ತಾ ಹಿಂದಕ್ಕೆ ತಿರುಗುತ್ತಾಳೆ.</verse>
				<verse number="9">ಅವಳ ಅಶುದ್ಧವು ಅವಳ ನೆರಿಗೆಗೆ ಅಂಟಿಕೊಂಡಿದೆ. ಅವಳು ತನ್ನ ಭವಿಷ್ಯವನ್ನು ಜ್ಞಾಪಕಮಾಡಿಕೊಳ್ಳುವುದಿಲ್ಲ. ಆದ್ದರಿಂದ ಅವಳು ಭಯಂಕರವಾಗಿ ಇಳಿದು ಬಂದಳು. ಅವಳನ್ನು ಆದರಿಸುವವರು ಯಾರೂ ಇಲ್ಲ. “ಓ ಯೆಹೋವ ದೇವರೇ, ನನ್ನ ಸಂಕಟವನ್ನು ನೋಡಿರಿ, ಶತ್ರುವು ಜಯಿಸಿದ್ದಾನೆ.”</verse>
				<verse number="10">ವೈರಿಯು ಆಕೆಯ ಎಲ್ಲಾ ಬೊಕ್ಕಸಗಳ ಮೇಲೆ ತನ್ನ ಕೈಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರಬಾರದೆಂದು ನೀನು ಆಜ್ಞಾಪಿಸಿದ ಇತರ ಜನಾಂಗಗಳು, ತನ್ನ ಪರಿಶುದ್ಧ ಸ್ಥಳದಲ್ಲಿ ಸೇರುವುದನ್ನು ನೋಡಿದ್ದಾಳೆ.</verse>
				<verse number="11">ಅವಳ ಜನರೆಲ್ಲರು ನರಳಾಡುತ್ತಾರೆ. ಅವರು ರೊಟ್ಟಿ ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು, ಅವರು ಆಹಾರಕ್ಕಾಗಿ ತಮ್ಮ ಬೊಕ್ಕಸಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ “ಯೆಹೋವ ದೇವರೇ, ನೋಡು, ಲಕ್ಷಿಸಿ; ಏಕೆಂದರೆ ನಾನು ಭ್ರಷ್ಠಳಾದೆನು.”</verse>
				<verse number="12">ಹಾದು ಹೋಗುವವರೇ, ಇದು ನಿಮಗೆ ಏನೂ ಇಲ್ಲವೋ? ಸುತ್ತಲೂ ದೃಷ್ಟಿಸಿ ನೋಡಿರಿ. ಯೆಹೋವ ದೇವರ ಉಗ್ರಕೋಪದ ದಿನದಲ್ಲಿ ನನ್ನನ್ನು ಸಂಕಟ ಪಡಿಸಿದ ಇಂಥಾ ದುಃಖವು, ಯಾರಿಗಾದರೂ ಉಂಟೋ ನೋಡಿರಿ.</verse>
				<verse number="13">ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿದ್ದಾನೆ. ಆತನು ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ, ಆತನು ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾರೆ. ಆತನು ನನ್ನನ್ನು ದಿನವೆಲ್ಲಾ ಹಾಳಾಗಿಯೂ, ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ.</verse>
				<verse number="14">ನನ್ನ ಪಾಪಗಳು ನನಗೆ ನೊಗವಾಗಿ, ನನ್ನ ಕುತ್ತಿಗೆಯ ಮೇಲೆ ಅವು ಬಂದಿವೆ. ಕರ್ತದೇವರು ನನ್ನ ಶಕ್ತಿಯನ್ನು ಕುಂದಿಸಿದ್ದಾರೆ. ಯೆಹೋವ ದೇವರು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ, ಅವರನ್ನು ನಾನು ಎದುರಿಸಲಾರದಂತೆ ಮಾಡಿದ್ದಾರೆ.</verse>
				<verse number="15">ಕರ್ತದೇವರು ನನ್ನ ಶೂರರನ್ನೆಲ್ಲಾ ತಿರಸ್ಕರಿಸಿದ್ದಾರೆ. ಅವರು ನನಗೆ ವಿರುದ್ಧ ಸೈನ್ಯವನ್ನು ಬರಮಾಡಿ, ನನ್ನ ಯುವಕರನ್ನು ಜಜ್ಜಿದ್ದಾರೆ. ಕರ್ತದೇವರು ಯೆಹೂದದ ಕನ್ಯೆಯನ್ನು ದ್ರಾಕ್ಷಿಯ ತೊಟ್ಟಿಯಂತೆ ತುಳಿದಿದ್ದಾರೆ.</verse>
				<verse number="16">ಇವುಗಳ ನಿಮಿತ್ತ ನಾನು ಅಳುತ್ತೇನೆ. ನನ್ನ ಕಣ್ಣೀರು ಕಣ್ಣಿನಿಂದ ತುಂಬಿ ಹರಿಯುತ್ತದೆ. ಏಕೆಂದರೆ ನನ್ನನ್ನು ಆದರಿಸುವವರೂ, ನನ್ನ ಪ್ರಾಣವನ್ನು ಬದುಕಿಸುವ ಆದರಿಕರೂ ನನ್ನಿಂದ ದೂರವಾಗಿದ್ದಾರೆ. ನನ್ನ ಮಕ್ಕಳು ಹಾಳಾಗಿದ್ದಾರೆ. ಏಕೆಂದರೆ ನನ್ನ ಶತ್ರುವು ಜಯಿಸಿದ್ದಾನೆ.</verse>
				<verse number="17">ಚೀಯೋನ್ ತನ್ನ ಕೈಗಳನ್ನು ಚಾಚುತ್ತಾಳೆ. ಅವಳನ್ನು ಆದರಿಸುವವನು ಒಬ್ಬನೂ ಇಲ್ಲ. ಯಾಕೋಬಿಗೆ ಸಂಬಂಧಿಸಿದ ಅವನ ವೈರಿಗಳು ಅವನ ಸುತ್ತಲೂ ಇರಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದಾರೆ. ಯೆರೂಸಲೇಮ್ ಅವರ ಮಧ್ಯದಲ್ಲಿ ಅಶುದ್ಧ ವಸ್ತುವಿನಂತಿದೆ.</verse>
				<verse number="18">ಯೆಹೋವ ದೇವರು ನೀತಿವಂತನು. ಏಕೆಂದರೆ ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದೇನೆ. ಎಲ್ಲಾ ಜನರೇ ಕೇಳಿರಿ, ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ನನ್ನ ದುಃಖವನ್ನು ನೋಡಿರಿ. ನನ್ನ ಕನ್ಯೆಯರೂ, ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.</verse>
				<verse number="19">ನಾನು ನನ್ನ ಪ್ರಿಯರನ್ನು ಕರೆದೆನು. ಆದರೆ ಅವರು ನನ್ನನ್ನು ಮೋಸಗೊಳಿಸಿದರು. ನನ್ನ ಯಾಜಕರು, ನನ್ನ ಹಿರಿಯರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ರೊಟ್ಟಿಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.</verse>
				<verse number="20">ಯೆಹೋವ ದೇವರೇ ನೋಡು, ಏಕೆಂದರೆ ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನನ್ನೊಂದಿಗೆ ತಿರುಗಿಕೊಂಡಿದೆ. ಏಕೆಂದರೆ ನಾನು ಘೋರವಾಗಿ ಬಿದ್ದಿದ್ದೇನೆ. ಹೊರಗೆ ಖಡ್ಗದಿಂದ ಸಂಹಾರ, ಮನೆಯೊಳಗೆ ಮರಣ.</verse>
				<verse number="21">ನಾನು ನರಳಾಡುವುದನ್ನು ಅವರು ಕೇಳಿದರೂ, ನನ್ನನ್ನು ಆದರಿಸಲು ಅಲ್ಲಿರಲಿಲ್ಲ. ನನ್ನ ಎಲ್ಲಾ ಶತ್ರುಗಳು ನನ್ನ ಕಷ್ಟದ ವಿಷಯವನ್ನು ಕೇಳಿದರು. ನೀವು ಹಾಗೆ ಮಾಡಿದಿರೆಂದು ಅವರು ಸಂತೋಷಪಟ್ಟರು. ನೀನು ತಿಳಿಸಿದ ಆ ದಿನವು ಬರಲು, ಅವರು ನನ್ನ ಹಾಗೆಯೇ ಆಗುವರು.</verse>
				<verse number="22">ಅವರ ಎಲ್ಲಾ ಕೆಟ್ಟತನವು ನಿನ್ನ ಮುಂದೆ ಇರಲಿ. ನನ್ನ ಎಲ್ಲಾ ದ್ರೋಹಗಳ ನಿಮಿತ್ತ, ನೀನು ನನಗೆ ಮಾಡಿದ ಪ್ರಕಾರವೇ ಅವರಿಗೆ ಮಾಡು. ಏಕೆಂದರೆ ನನ್ನ ನರಳಾಟವು ಅನೇಕವಾಗಿವೆ. ನನ್ನ ಹೃದಯವು ಮೂರ್ಛೆಗೊಂಡಿದೆ.</verse>
			</chapter>
			<chapter number="2">
				<verse number="1">ಕರ್ತದೇವರು ಹೇಗೆ ತಮ್ಮ ಕೋಪದ ಮೇಘದಿಂದ ಚೀಯೋನಿನ ಮಗಳನ್ನು ಮುಚ್ಚಿ ಇಸ್ರಾಯೇಲಿನ ಸೌಂದರ್ಯವನ್ನು ಆಕಾಶದಿಂದ ಭೂಮಿಗೆ ಎಸೆದರು. ತನ್ನ ಕೋಪದ ದಿನದಲ್ಲಿ, ತನ್ನ ಪಾದಪೀಠವನ್ನು ಜ್ಞಾಪಕ ಮಾಡಿಕೊಳ್ಳಲಿಲ್ಲ.</verse>
				<verse number="2">ಕರ್ತದೇವರು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾರೆ. ಯೆಹೂದದ ಪುತ್ರಿಯ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿ ಹಾಕಿದ್ದಾರೆ. ಅವರು ಅವುಗಳನ್ನು ನೆಲಸಮ ಮಾಡಿದ್ದಾರೆ. ಅವರು ಆಕೆಯ ರಾಜ್ಯವನ್ನೂ, ಪ್ರಭುಗಳನ್ನೂ ಅಗೌರವಿಸಿ ನೆಲಕ್ಕೆ ದಬ್ಬಿದ್ದಾರೆ.</verse>
				<verse number="3">ಅವರು ತನ್ನ ತೀಕ್ಷ್ಣ ಕೋಪದಲ್ಲಿ ಇಸ್ರಾಯೇಲಿನ ಕೊಂಬುಗಳನ್ನೆಲ್ಲಾ ಮುರಿದು ಹಾಕಿದ್ದಾರೆ. ಅವರು ಶತ್ರುವಿನ ಎದುರಿನಿಂದ ತನ್ನ ಬಲಗೈಯನ್ನು ಹಿಂತೆಗೆದುಕೊಂಡಿದ್ದಾರೆ. ತನ್ನ ಸುತ್ತಲೂ ಇರುವವರನ್ನು ದಹಿಸುವ ಬೆಂಕಿಯಂತೆ, ಅವರು ಯಾಕೋಬನಿಗೆ ವಿರುದ್ಧವಾಗಿ ದಹಿಸಿಬಿಟ್ಟಿದ್ದಾರೆ.</verse>
				<verse number="4">ಅವರು ಶತ್ರುವಿನ ಹಾಗೆಯೇ ತನ್ನ ಬಿಲ್ಲನ್ನು ಬಗ್ಗಿಸಿದ್ದಾರೆ. ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು, ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾರೆ. ಅವರು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್ ಪುತ್ರಿಯ ಡೇರೆಯಲ್ಲಿ ಸುರಿದಿದ್ದಾರೆ.</verse>
				<verse number="5">ಕರ್ತದೇವರು ಶತ್ರುವಿನಂತೆ ಆಗಿ, ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾರೆ. ಕರ್ತದೇವರು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾರೆ. ಯೆಹೂದದ ದುಃಖವನ್ನೂ, ಪ್ರಲಾಪವನ್ನೂ ಹೆಚ್ಚಿಸಿದ್ದಾರೆ.</verse>
				<verse number="6">ಅವರು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾರೆ. ಅವರು ತನ್ನ ಸಭಾ ಸ್ಥಾನಗಳನ್ನು ನಾಶಮಾಡಿದ್ದಾರೆ. ಯೆಹೋವ ದೇವರು ಚೀಯೋನಿಗೆ ಪವಿತ್ರ ಹಬ್ಬಗಳನ್ನೂ, ಸಬ್ಬತ್ ದಿನಗಳನ್ನೂ ಮರೆತುಬಿಡುವಂತೆ ಮಾಡಿದ್ದಾರೆ. ತನ್ನ ಕೋಪದ ಉರಿಯಲ್ಲಿ ಅರಸನನ್ನೂ, ಯಾಜಕನನ್ನೂ ತುಚ್ಛೀಕರಿಸಿದ್ದಾರೆ.</verse>
				<verse number="7">ಕರ್ತದೇವರು ತನ್ನ ಬಲಿಪೀಠವನ್ನು ತಳ್ಳಿಬಿಟ್ಟಿದ್ದಾರೆ. ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯ ಪಡಿಸಿದ್ದಾನೆ. ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ. ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ, ಅವರು ಯೆಹೋವ ದೇವರು ಆಲಯದಲ್ಲಿ ಶಬ್ದ ಮಾಡಿದ್ದಾರೆ.</verse>
				<verse number="8">ಯೆಹೋವ ದೇವರು ಚೀಯೋನಿನ ಗೋಡೆಯನ್ನು ನಾಶಮಾಡಬೇಕೆಂದು ಉದ್ದೇಶಿಸಿದ್ದಾರೆ. ಅಳತೆಯ ಗೆರೆಯನ್ನು ಎಳೆದಿದ್ದಾರೆ. ತನ್ನ ಕೈಯನ್ನು ಕೆಡಿಸುವುದರಿಂದ ಹಿಂದೆಗೆಯಲಿಲ್ಲ. ಆದ್ದರಿಂದ ಕಲ್ಲಿನ ಪ್ರಾಕಾರವನ್ನು ಮತ್ತು ಗೋಡೆಯನ್ನು ಗೋಳಾಡುವಂತೆ ಆತನು ಮಾಡಿದ್ದಾನೆ. ಅವೆರಡೂ ಜೊತೆಯಾಗಿ ಕುಸಿದು ಹೋಗಿವೆ.</verse>
				<verse number="9">ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ. ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಅವಳ ಪ್ರಭುಗಳು ಇತರ ಜನಾಂಗಗಳ ಮಧ್ಯೆ ಇರುವರು. ಇನ್ನು ದೈವನಿಯಮವು ನಿಂತುಹೋಗಿವೆ. ಆಕೆಯ ಪ್ರವಾದಿಗಳು ಸಹ ಯೆಹೋವ ದೇವರಿಂದ ದರ್ಶನವನ್ನು ಕಂಡುಕೊಳ್ಳುವುದಿಲ್ಲ.</verse>
				<verse number="10">ಚೀಯೋನಿನ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಶಬ್ದವಾಗಿದ್ದಾರೆ. ಅವರು ತಮ್ಮ ತಲೆಗಳ ಮೇಲೆ ಧೂಳು ಹಾಕಿಕೊಂಡಿದ್ದಾರೆ. ಅವರು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ. ಯೆರೂಸಲೇಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬಗ್ಗಿಸಿಕೊಂಡಿದ್ದಾರೆ.</verse>
				<verse number="11">ನನ್ನ ಕಣ್ಣುಗಳು ಕಣ್ಣೀರಿನಿಂದ ಕುಂದಿ ಹೋಗುತ್ತವೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನೆಲದ ಮೇಲೆ ಹರಡಿದೆ. ಏಕೆಂದರೆ ನನ್ನ ಜನರು ನಾಶವಾಗಿದ್ದಾರೆ. ಮಕ್ಕಳೂ ಶಿಶುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.</verse>
				<verse number="12">ಅವರು ನಗರದ ಬೀದಿಗಳಲ್ಲಿ ಗಾಯಪಟ್ಟವರ ಹಾಗೆ ಮೂರ್ಛೆ ಹೋದಾಗ, ತಮ್ಮ ತಾಯಂದಿರ ಎದೆಯಲ್ಲಿ ಪ್ರಾಣ ಸುರಿದಾಗ, “ತಿನ್ನಲಿಕ್ಕೆ ರೊಟ್ಟಿಯೂ ದ್ರಾಕ್ಷಾರಸವೂ ಎಲ್ಲಿ?” ಎಂದು ತಮ್ಮ ತಾಯಂದಿರಿಗೆ ಕೇಳುತ್ತಾರೆ.</verse>
				<verse number="13">ಯೆರೂಸಲೇಮಿನ ಪುತ್ರಿಯೇ, ನಾನು ಯಾವುದನ್ನು ನಿನಗೆ ಸಾಕ್ಷಿಯನ್ನಾಗಿಡಲಿ? ಯಾವುದನ್ನು ನಿನಗೆ ಸಮಾನ ಮಾಡಲಿ? ಚೀಯೋನಿನ ಕನ್ಯೆಯೇ, ನಿನ್ನನ್ನು ಆದರಿಸುವವರು ಯಾರು?</verse>
				<verse number="14">ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮತ್ತು ಮೂರ್ಖತನದ ದರ್ಶನಗಳನ್ನು ನೋಡಿದ್ದಾರೆ. ಅವರು ನಿನ್ನ ಬಂಧನವನ್ನು ನೀಗಿಸುವುದಕ್ಕಾಗಿ ನಿನ್ನ ಪಾಪವನ್ನು ಬಯಲಿಗೆ ತರಲಿಲ್ಲ. ಆದರೆ ನಿನಗಾಗಿ ಸುಳ್ಳಿನ ಪ್ರವಾದನೆಗಳನ್ನು ಕೊಟ್ಟು ಗಡಿಪಾರು ಮಾಡುವುದಕ್ಕೆ ಕಾರಣರಾಗಿದ್ದಾರೆ.</verse>
				<verse number="15">ದಾರಿಯಲ್ಲಿ ಹೋಗುವವರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ. ಅವರು ಯೆರೂಸಲೇಮಿನ ಪುತ್ರಿಯ ವಿಷಯದಲ್ಲಿ ಸಿಳ್ಳುಹಾಕಿ, ತಲೆಯಾಡಿಸಿ ಆ ಮನುಷ್ಯರು ಕರೆಯುತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ, ಸರ್ವಭೂಮಿಯ ಸಂತೋಷವೂ ಆಗಿರುವ ನಗರಿಯು ಇದೆಯೋ?</verse>
				<verse number="16">ನಿನ್ನ ಎಲ್ಲಾ ಶತ್ರುಗಳು ನಿನಗೆ ವಿರೋಧವಾಗಿ ತಮ್ಮ ಬಾಯಿತೆರೆದಿದ್ದಾರೆ. “ನಾವು ಆಕೆಯನ್ನು ನುಂಗಿಬಿಟ್ಟೆವು. ನಿಶ್ಚಯವಾಗಿ ನಾವು ನಿರೀಕ್ಷಿಸಿದ ದಿನವು ಇದೇ. ಅದನ್ನು ನಾವು ಕಣ್ಣಾರೆ ಕಂಡಿದ್ದೇವೆ,” ಎಂದು ಅವರು ಕೊಚ್ಚಿಕೊಳ್ಳುತ್ತಾರೆ.</verse>
				<verse number="17">ಯೆಹೋವ ದೇವರು ತಾವು ಸಂಕಲ್ಪಿಸಿದ್ದನ್ನು ಮಾಡಿದ್ದಾರೆ. ಅವರು ಪುರಾತನ ಕಾಲದ ದಿನಗಳಲ್ಲಿ ಆಜ್ಞಾಪಿಸಿದ ತಮ್ಮ ವಾಕ್ಯವನ್ನು ಪೂರೈಸಿದ್ದಾರೆ. ಅವರು ಕೆಡವಿ ಕನಿಕರಿಸಲಿಲ್ಲ. ಅವರು ನಿನ್ನ ಶತ್ರುವನ್ನು ನಿನ್ನ ವಿಷಯವಾಗಿ ಸಂತೋಷಪಡುವ ಹಾಗೆ ಮಾಡಿದ್ದಾರೆ. ಆತನು ನಿನ್ನ ವೈರಿಗಳ ಕೊಂಬನ್ನು ಎತ್ತಿದ್ದಾರೆ.</verse>
				<verse number="18">ಅವರ ಹೃದಯವು ಕರ್ತದೇವರ ಕಡೆಗೆ ಕೂಗಿ, ಚೀಯೋನಿನ ಗೋಡೆಯೇ, ರಾತ್ರಿ ಹಗಲೂ ನಿನ್ನ ಕಣ್ಣೀರು ನದಿಯಂತೆ ಹರಿದು ಹೋಗಲಿ, ನಿನಗೆ ವಿಶ್ರಾಂತಿ ಬೇಡ, ನಿನ್ನ ಕಣ್ಣ ರೆಪ್ಪೆಯನ್ನು ಮುಚ್ಚಬೇಡ.</verse>
				<verse number="19">ಎದ್ದೇಳು, ರಾತ್ರಿಯಲ್ಲಿ ಕೂಗು. ನಿನ್ನ ಹೃದಯವನ್ನು ಕರ್ತದೇವರ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ ನೀರಿನಂತೆ ಹೊಯ್ದುಬಿಡಿರಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಏಕೆಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.</verse>
				<verse number="20">ಯೆಹೋವ ದೇವರೇ, ಕಟಾಕ್ಷಿಸಿ: ನೀವು ಇದನ್ನು ಯಾರಿಗೆ ಮಾಡಿದಿರೋ ಯೋಚಿಸಿರಿ. ಸ್ತ್ರೀಯರು ತಮ್ಮ ಫಲವಾದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಮತ್ತು ಪ್ರವಾದಿಯು ಕರ್ತದೇವರ ಪರಿಶುದ್ಧ ಸ್ಥಳದಲ್ಲಿ ಹತರಾಗಬೇಕೋ?</verse>
				<verse number="21">ಯುವಕರು ಮತ್ತು ವೃದ್ಧರು ಬೀದಿಗಳ ನೆಲದ ಮೇಲೆ ಮಲಗಿದ್ದಾರೆ. ನನ್ನ ಯುವಕರು, ಯುವತಿಯರು ಖಡ್ಗದಿಂದ ಹತರಾಗಿದ್ದಾರೆ. ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿರಿ, ಕೊಂದುಹಾಕಿದಿರಿ, ಕನಿಕರಿಸಲಿಲ್ಲ.</verse>
				<verse number="22">ಹಬ್ಬದ ದಿನಕ್ಕೆ ಕರೆಯುವಂತೆಯೇ ನನ್ನ ವಿರುದ್ಧವಾಗಿ ಪ್ರತಿಯೊಂದು ದಿಕ್ಕಿನಲ್ಲಿಯ ವಿರೋಧಿಗಳನ್ನು ಕರೆದಿದ್ದೀರಿ. ಯೆಹೋವ ದೇವರ ಕೋಪದ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಾರರು, ಉಳಿದುಕೊಳ್ಳಲಾರರು. ನಾನು ಬೆಳೆಸಿ ಸಾಕಿದವರನ್ನು ವೈರಿಯು ನಾಶಮಾಡಿದ್ದಾನೆ.</verse>
			</chapter>
			<chapter number="3">
				<verse number="1">ಯೆಹೋವ ದೇವರ ಕೋಪದ ಕೋಲಿನಿಂದ ಕಷ್ಟವನ್ನು ನೋಡಿದ ಮನುಷ್ಯನು ನಾನೇ.</verse>
				<verse number="2">ಅವರು ನನ್ನನ್ನು ಕರೆತಂದು ನಡೆಸಿದ್ದು ಕತ್ತಲೆಗೇ ಹೊರತು ಬೆಳಕಿಗಲ್ಲ.</verse>
				<verse number="3">ನಿಶ್ಚಯವಾಗಿ ಅವರು ನನಗೆ ವಿರೋಧವಾಗಿ ತಿರುಗಿದ್ದಾರೆ. ಅವರು ದಿನವೆಲ್ಲಾ ತಮ್ಮ ಕೈಯನ್ನು ನನಗೆ ವಿರೋಧವಾಗಿ ತಿರುಗಿಸಿದ್ದಾರೆ.</verse>
				<verse number="4">ನನ್ನ ಮಾಂಸ, ಚರ್ಮವನ್ನು ಆತನು ಹಳೆಯದನ್ನಾಗಿ ಮಾಡಿದ್ದಾರೆ. ಅವರು ನನ್ನ ಎಲುಬುಗಳನ್ನು ಮುರಿದಿದ್ದಾರೆ.</verse>
				<verse number="5">ಅವರು ನನಗೆ ವಿರೋಧವಾಗಿ ಕಟ್ಟಿದ್ದಾರೆ ಮತ್ತು ನನ್ನನ್ನು ವಿಷದಿಂದಲೂ, ಸಂಕಟದಿಂದಲೂ ಸುತ್ತಿಕೊಂಡಿದ್ದಾರೆ.</verse>
				<verse number="6">ಅವರು ನನ್ನನ್ನು ಬಹುಕಾಲದ ಹಿಂದೆ ಸತ್ತವರ ಹಾಗೆ, ಕತ್ತಲೆಯ ಸ್ಥಳಗಳಲ್ಲಿ ಇರಿಸಿದ್ದಾರೆ.</verse>
				<verse number="7">ನಾನು ಹೊರಗೆ ಬಾರದ ಹಾಗೆ, ಅವರು ನನ್ನ ಸುತ್ತಲೂ ಗೋಡೆಯನ್ನು ಕಟ್ಟಿದ್ದಾರೆ. ಅವರು ನನ್ನ ಸಂಕೋಲೆಯ ಭಾರವನ್ನು ಹೆಚ್ಚಿಸಿದ್ದಾರೆ.</verse>
				<verse number="8">ನಾನು ಕರೆದು ಕೂಗಿದರೂ ಅವರು ನನ್ನ ಪ್ರಾರ್ಥನೆಯನ್ನು ಲಾಲಿಸುವುದಿಲ್ಲ.</verse>
				<verse number="9">ಕೆತ್ತಿದ ಕಲ್ಲಿನಿಂದ ನನ್ನ ಮಾರ್ಗಗಳನ್ನು ಮುಚ್ಚಿ, ಆ ನನ್ನ ದಾರಿಗಳನ್ನು ಡೊಂಕು ಮಾಡಿದ್ದಾನೆ.</verse>
				<verse number="10">ಅವರು ನನಗೆ ಹೊಂಚು ಹಾಕುವ ಕರಡಿಯ ಹಾಗೆಯೂ, ಗುಪ್ತ ಸ್ಥಳಗಳಲ್ಲಿರುವ ಸಿಂಹದ ಹಾಗೆಯೂ ಇದ್ದಾರೆ.</verse>
				<verse number="11">ಅವರು ನನ್ನ ಮಾರ್ಗಗಳನ್ನು ತಪ್ಪಿಸಿ, ನನ್ನನ್ನು ತುಂಡುಗಳನ್ನಾಗಿ ಕತ್ತರಿಸಿ, ನನ್ನನ್ನು ಹಾಳು ಮಾಡಿದ್ದಾರೆ.</verse>
				<verse number="12">ಅವರು ತನ್ನ ಬಿಲ್ಲನ್ನು ಬಗ್ಗಿಸಿದ್ದಾರೆ, ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾರೆ.</verse>
				<verse number="13">ಅವರು ತನ್ನ ಬತ್ತಳಿಕೆಯಲ್ಲಿನ ಬಾಣಗಳನ್ನು ನನ್ನ ಅಂತರಂಗಗಳಲ್ಲಿ ತೂರಿ ಹೋಗುವಹಾಗೆ ಮಾಡಿದ್ದಾರೆ.</verse>
				<verse number="14">ನಾನು ನನ್ನ ಎಲ್ಲಾ ಜನರಿಗೆ ಹಾಸ್ಯವೂ, ದಿನವೆಲ್ಲವೂ ಅವರ ಗೇಲಿಯ ಹಾಡಾಗಿಯೂ ಇದ್ದೇನೆ.</verse>
				<verse number="15">ಅವರು ನನ್ನನ್ನು ಕಹಿಯಿಂದ ತುಂಬಿಸಿ, ವಿಷ ಸಸ್ಯಗಳಿಂದ ನನ್ನನ್ನು ತಣಿಸಿದ್ದಾರೆ.</verse>
				<verse number="16">ಅವರು ನುರುಜು ಕಲ್ಲುಗಳಿಂದ ನನ್ನ ಹಲ್ಲುಗಳನ್ನು ಮುರಿದು, ಅವರು ನನ್ನನ್ನು ಧೂಳಿನಲ್ಲಿ ತುಳಿದಿದ್ದಾರೆ.</verse>
				<verse number="17">ನನ್ನ ಪ್ರಾಣವನ್ನು ಸಮಾಧಾನದಿಂದ ದೂರ ಮಾಡಿದ್ದಾರೆ, ನಾನು ಸಮೃದ್ಧಿಯನ್ನು ಮರೆತುಬಿಟ್ಟೆನು.</verse>
				<verse number="18">“ಅಯ್ಯೋ, ನನ್ನ ಬಲವು ಮತ್ತು ನನ್ನ ನಿರೀಕ್ಷೆಯು ಯೆಹೋವ ದೇವರಿಂದ ನಾಶವಾದವು,” ಎಂದು ನಾನು ಹೇಳಿದೆನು.</verse>
				<verse number="19">ನನ್ನ ಸಂಕಟವನ್ನು, ನನ್ನ ಅಲೆದಾಡುವಿಕೆಯನ್ನು, ನನ್ನ ಕಹಿಯನ್ನು, ನನ್ನ ವಿಷತನವನ್ನು ನಾನು ಜ್ಞಾಪಕಮಾಡಿಕೊಂಡಿದ್ದೇನೆ.</verse>
				<verse number="20">ನನ್ನ ಪ್ರಾಣವು ಇನ್ನೂ ಅವುಗಳನ್ನು ಜ್ಞಾಪಿಸಿಕೊಳ್ಳುತ್ತಾ ನನ್ನೊಳಗೆ ಕುಂದಿಹೋಗಿದೆ.</verse>
				<verse number="21">ಇದನ್ನು ನಾನು ನನ್ನ ಮನಸ್ಸಿಗೆ ತಂದುಕೊಳ್ಳುತ್ತೇನೆ. ಆದ್ದರಿಂದ ನನಗೆ ನಿರೀಕ್ಷೆ ಇದೆ.</verse>
				<verse number="22">ನಾವು ನಾಶವಾಗದೇ ಉಳಿದಿರುವುದು ಯೆಹೋವ ದೇವರ ಮಹಾ ಪ್ರೀತಿಯಿಂದಲೇ. ಏಕೆಂದರೆ ಅವರ ಅನುಕಂಪಗಳು ಮುಗಿಯುವುದಿಲ್ಲ.</verse>
				<verse number="23">ಅವು ಪ್ರತಿ ಮುಂಜಾನೆಯೂ ಹೊಸದಾಗಿರುವುವು. ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.</verse>
				<verse number="24">“ಯೆಹೋವ ದೇವರೇ ನನ್ನ ಪಾಲು, ಆದ್ದರಿಂದ ನಾನು ಅವರಿಗಾಗಿ ಕಾದಿರುತ್ತೇನೆ,” ಎಂದು ನಾನು ನನ್ನೊಳಗೆ ಎಂದುಕೊಳ್ಳುವೆನು.</verse>
				<verse number="25">ಆತನನ್ನು ನಿರೀಕ್ಷಿಸುವವರಿಗೂ, ಆತನನ್ನು ಹುಡಕುವವರಿಗೂ ಯೆಹೋವ ದೇವರು ಒಳ್ಳೆಯವರಾಗಿದ್ದಾರೆ.</verse>
				<verse number="26">ಮನುಷ್ಯನು ಮೌನವಾಗಿ ಯೆಹೋವ ದೇವರ ರಕ್ಷಣೆಗೆ ಕಾಯುವುದು ಒಳ್ಳೆಯದು.</verse>
				<verse number="27">ತನ್ನ ಯೌವನದಲ್ಲಿ ನೊಗವನ್ನು ಹೊಂದಿರುವುದು ಮಾನವನಿಗೆ ಒಳ್ಳೆಯದು.</verse>
				<verse number="28">ಅವನು ಒಂಟಿಯಾಗಿ ಕುಳಿತು ಮೌನವಾಗಿರಲಿ. ಏಕೆಂದರೆ ಯೆಹೋವ ದೇವರೇ ಅದನ್ನು ಅವನ ಮೇಲೆ ಹೊರಿಸಿದ್ದಾರೆ.</verse>
				<verse number="29">ಒಂದು ವೇಳೆ ನಿರೀಕ್ಷೆ ಇರಬಹುದೇನೋ ಎಂದು ಅವನು ತನ್ನ ಮುಖವನ್ನು ಧೂಳಿನಲ್ಲಿ ಇಟ್ಟುಕೊಳ್ಳಲಿ.</verse>
				<verse number="30">ಅವನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡಲಿ. ಅವನು ನಿಂದೆಯಿಂದಲೇ ತುಂಬಿರಲಿ.</verse>
				<verse number="31">ಏಕೆಂದರೆ ಕರ್ತದೇವರು ಜನರನ್ನು ಎಂದೆಂದಿಗೂ ತಳ್ಳಿಬಿಡುವುದಿಲ್ಲ.</verse>
				<verse number="32">ಆತನು ದುಃಖಪಡಿಸಿದರೂ, ತನ್ನ ಒಡಂಬಡಿಕೆಯ ಮಹಾಪ್ರೀತಿಯಿಂದ ಅನುಕಂಪ ತೋರಿಸುವರು.</verse>
				<verse number="33">ಏಕೆಂದರೆ ಆತನು ಬೇಕೆಂದು ಮನುಷ್ಯರ ಮಕ್ಕಳಿಗೆ ಬಾಧೆಯನ್ನೂ, ದುಃಖವನ್ನೂ ಕೊಡುವುದಿಲ್ಲ.</verse>
				<verse number="34">ಭೂಲೋಕದ ಸೆರೆಯವರನ್ನೆಲ್ಲಾ ಕಾಲುಗಳ ಕೆಳಗೆ ತುಳಿಯುವುದನ್ನೂ,</verse>
				<verse number="35">ಮಹೋನ್ನತನ ಸನ್ನಿಧಿಯಲ್ಲಿ ಮನುಷ್ಯನ ನ್ಯಾಯವನ್ನು ನಿರಾಕರಿಸುವುದನ್ನೂ,</verse>
				<verse number="36">ಮನುಷ್ಯನನ್ನು ಅವನ ಜಗಳದಲ್ಲಿ ಅನ್ಯಾಯವಾಗಿ ತೀರಿಸುವುದು ಕರ್ತದೇವರು ಮೆಚ್ಚುವುದಿಲ್ಲ.</verse>
				<verse number="37">ಕರ್ತದೇವರು ಆಜ್ಞಾಪಿಸದೆ ಇರುವಾಗ, ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?</verse>
				<verse number="38">ಮಹೋನ್ನತರ ಬಾಯಿಂದ ಕೇಡೂ, ಒಳ್ಳೆಯ ಸಂಗತಿಗಳೂ ಹೊರಡುವುದಿಲ್ಲವೇ?</verse>
				<verse number="39">ಬದುಕುವ ಮನುಷ್ಯನು ತನ್ನ ಪಾಪಗಳ ಶಿಕ್ಷೆಗಾಗಿ ಗೊಣಗುಟ್ಟುವುದೇಕೆ?</verse>
				<verse number="40">ನಾವು ನಮ್ಮ ಮಾರ್ಗಗಳನ್ನು ಪರಿಶೋಧಿಸಿ, ಪರೀಕ್ಷಿಸಿಕೊಂಡು ಆಮೇಲೆ ಯೆಹೋವ ದೇವರ ಬಳಿಗೆ ತಿರುಗಿಕೊಳ್ಳೋಣ.</verse>
				<verse number="41">ನಮ್ಮ ಹೃದಯಗಳನ್ನು ನಮ್ಮ ಕೈಗಳೊಂದಿಗೆ ಪರಲೋಕದ ದೇವರ ಕಡೆಗೆ ಎತ್ತಿಕೊಳ್ಳೋಣ.</verse>
				<verse number="42">ನಾವು ದ್ರೋಹಮಾಡಿದ್ದೇವೆ ಮತ್ತು ಎದುರು ಬಿದ್ದಿದ್ದೇವೆ, ನೀವು ಮನ್ನಿಸಲಿಲ್ಲ.</verse>
				<verse number="43">ಕೋಪದಲ್ಲಿ ನಮ್ಮನ್ನು ಮುಚ್ಚಿ ಹಿಂಸಿಸಿದ್ದೀರಿ. ಕನಿಕರಿಸದೆ ಕೊಂದು ಹಾಕಿರುವಿರಿ.</verse>
				<verse number="44">ನಮ್ಮ ಪ್ರಾರ್ಥನೆಯು ನಿನ್ನ ಸನ್ನಿಧಿಗೆ ಸೇರದಂತೆ ನಿನ್ನನ್ನು ಮೇಘದಿಂದ ಮುಚ್ಚಿಕೊಂಡಿದ್ದೀರಿ.</verse>
				<verse number="45">ನೀನು ನಮ್ಮನ್ನು ಜನರ ಮಧ್ಯದಲ್ಲಿ ಕಲ್ಮಷವನ್ನಾಗಿಯೂ, ಕಸವನ್ನಾಗಿಯೂ ಮಾಡಿದ್ದೀಯೆ.</verse>
				<verse number="46">ನಮ್ಮ ಎಲ್ಲಾ ಶತ್ರುಗಳು ನಮಗೆ ವಿರುದ್ಧವಾಗಿ ಅವರ ಬಾಯಿಗಳನ್ನು ತೆರೆದಿದ್ದಾರೆ.</verse>
				<verse number="47">ಭಯವನ್ನೂ, ನಾಶವನ್ನೂ ನಾವು ಅನುಭವಿಸಿದ್ದೇವೆ.</verse>
				<verse number="48">ನನ್ನ ಜನರ ನಾಶದ ನಿಮಿತ್ತವಾಗಿ, ನನ್ನ ಕಣ್ಣಿನಿಂದ ನೀರು ನದಿಯಾಗಿ ಹರಿದು ಹೋಗುತ್ತದೆ.</verse>
				<verse number="49">ಯೆಹೋವ ದೇವರು ಕಟಾಕ್ಷಿಸಿ, ಪರಲೋಕದಿಂದ ನೋಡುವ ತನಕ ನೇತ್ರವು ನಿರಂತರ ಕಣ್ಣೀರು ಸುರಿಸುತ್ತದೆ.</verse>
				<verse number="50">ವಿಶ್ರಮಿಸಿಕೊಳ್ಳುವುದೂ ಇಲ್ಲ.</verse>
				<verse number="51">ನನ್ನ ನಗರದ ಪುತ್ರಿಯರೆಲ್ಲರ ನಿಮಿತ್ತವಾಗಿ ನನ್ನ ಕಣ್ಣುಗಳು ನನ್ನ ಹೃದಯವನ್ನು ಪೀಡಿಸಿದೆ.</verse>
				<verse number="52">ನನ್ನ ಶತ್ರುಗಳು ಕಾರಣವಿಲ್ಲದೆ ಪಕ್ಷಿಯಂತೆ ನನ್ನನ್ನು ಕಠೋರವಾಗಿ ಹಿಂದಟ್ಟಿ ಬೇಟೆಯಾಡಿದರು.</verse>
				<verse number="53">ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ, ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ.</verse>
				<verse number="54">ನನ್ನ ತಲೆಯ ಮೇಲೆ ನೀರು ಹರಿಯಿತು. ಆಗ ನಾನು ನಾಶವಾದೆನು ಅಂದುಕೊಂಡೆನು.</verse>
				<verse number="55">ಯೆಹೋವ ದೇವರೇ, ನಾನು ಆಳವಾದ ಕಾರಾಗೃಹದಿಂದ ನಿಮ್ಮ ಹೆಸರನ್ನು ಎತ್ತಿ ಬೇಡಿಕೊಂಡೆನು.</verse>
				<verse number="56">ನೀನು ನನ್ನ ಸ್ವರವನ್ನು ಕೇಳಿದ್ದೀ. “ನನ್ನ ಶ್ವಾಸಕ್ಕೂ, ನನ್ನ ಕೂಗಿಗೂ ನಿನ್ನ ಕಿವಿಯನ್ನು ಮರೆಮಾಡಬೇಡಿರಿ.”</verse>
				<verse number="57">ನಾನು ನಿನ್ನನ್ನು ಕರೆದ ದಿನದಲ್ಲಿ ನೀನು ಸಮೀಪಕ್ಕೆ ಬಂದು, “ಭಯಪಡಬೇಡ,” ಎಂದು ಹೇಳಿದಿರಿ.</verse>
				<verse number="58">ಕರ್ತದೇವರೇ, ನೀನು ನನ್ನ ಪ್ರಾಣದ ವ್ಯಾಜ್ಯಗಳನ್ನು ನಡೆಸಿ, ನನ್ನ ಜೀವವನ್ನು ವಿಮೋಚಿಸಿದ್ದೀರಿ.</verse>
				<verse number="59">ಯೆಹೋವ ದೇವರೇ, ನೀವು ನನ್ನ ಅನ್ಯಾಯವನ್ನು ನೋಡಿದ್ದೀರಿ, ನೀವು ನನ್ನ ನ್ಯಾಯವನ್ನು ತೀರಿಸಿರಿ.</verse>
				<verse number="60">ನನಗೆ ವಿರುದ್ಧವಾಗಿ ಅವರ ಎಲ್ಲಾ ಪ್ರತೀಕಾರವನ್ನೂ ನೋಡಿದ್ದೀರಲ್ಲಾ.</verse>
				<verse number="61">ಯೆಹೋವ ದೇವರೇ, ಅವರ ಎಲ್ಲಾ ಕಲ್ಪನೆಗಳನ್ನೂ ಮತ್ತು ನನಗೆ ವಿರುದ್ಧವಾಗಿ ಹೇಳುವವರ ತುಟಿಗಳನ್ನೂ,</verse>
				<verse number="62">ದಿನವಿಡೀ ನನಗೆ ವಿರುದ್ಧವಾದ ಅವರ ದುರಾಲೋಚನೆಯನ್ನೂ ಕೇಳಿರುವಿರಿ.</verse>
				<verse number="63">ಅವರನ್ನು ನೋಡು! ಕುಳಿತು ಅಥವಾ ನಿಂತಾಗ, ಅವರು ತಮ್ಮ ಹಾಡುಗಳಲ್ಲಿ ನನ್ನನ್ನು ಅಣಕಿಸುತ್ತಾರೆ.</verse>
				<verse number="64">ಯೆಹೋವ ದೇವರೇ, ಅವರ ಕೈಕೆಲಸಗಳ ಪ್ರಕಾರ ಅವರಿಗೆ ಪ್ರತಿಫಲವನ್ನು ಕೊಡಿ.</verse>
				<verse number="65">ಅವರಿಗೆ ದುಃಖಕರವಾದ ಹೃದಯವನ್ನೂ, ನಿಮ್ಮ ಶಾಪವನ್ನೂ ಕೊಡಿ.</verse>
				<verse number="66">ಯೆಹೋವ ದೇವರೇ, ಆಕಾಶದ ಕೆಳಗಿನಿಂದ ಕೋಪದಿಂದ ಅವರನ್ನು ಹಿಂಸಿಸಿ ಹಾಳುಮಾಡಿರಿ.</verse>
			</chapter>
			<chapter number="4">
				<verse number="1">ಬಂಗಾರವು ಹೇಗೆ ಮಸುಕಾಯಿತು! ಬಹಳ ಶುದ್ಧವಾದ ಬಂಗಾರವು ಹೇಗೆ ಬದಲಾಯಿತು! ಪರಿಶುದ್ಧಸ್ಥಳದ ಕಲ್ಲುಗಳೂ ಬೀದಿಯ ಬದಿಯಲ್ಲಿ ಚೆಲ್ಲಾಪಿಲ್ಲಿಯಾಗಿವೆ.</verse>
				<verse number="2">ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಪುತ್ರರು, ಈಗ ಕುಂಬಾರನ ಕೈಕೆಲಸದ ಮಣ್ಣಿನ ಮಡಕೆಯಂತೆ ತಿರಸ್ಕೃತರಾಗಿದ್ದಾರಲ್ಲಾ!</verse>
				<verse number="3">ನರಿಗಳೂ ತಮ್ಮ ಕೆಚ್ಚಲನ್ನು ಹೊರ ಎಳೆದು ತಮ್ಮ ಮರಿಗಳಿಗೆ ಹಾಲು ಕುಡಿಸುತ್ತವೆ. ಆದರೆ ನನ್ನ ಜನರು ಅರಣ್ಯದಲ್ಲಿರುವ ಉಷ್ಟ್ರಪಕ್ಷಿಗಳ ಹಾಗೆ ಕ್ರೂರವಾಗಿದ್ದಾರೆ.</verse>
				<verse number="4">ಹಸುಳೆಗಳ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ. ಎಳೆಯ ಕೂಸುಗಳು ಅನ್ನ ಕೇಳುತ್ತವೆ. ಆದರೆ ಅವರಿಗೆ ಯಾರೂ ಅದನ್ನು ಕೊಡುವುದಿಲ್ಲ.</verse>
				<verse number="5">ರುಚಿಯಾದವುಗಳನ್ನು ಒಮ್ಮೆ ತಿಂದವರು ಬೀದಿಗಳಲ್ಲಿ ಹಾಳಾಗಿದ್ದಾರೆ. ಚಿಕ್ಕಂದಿನಿಂದಲೂ ಶ್ರೇಷ್ಠ ವಸ್ತ್ರವನ್ನು ತೊಡುತ್ತಿದ್ದವರು, ತಿಪ್ಪೆಗಳಲ್ಲಿ ಬಿದ್ದುಕೊಂಡಿದ್ದಾರೆ.</verse>
				<verse number="6">ನನ್ನ ಜನರ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು. ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲಾಯಿತು ಮತ್ತು ಅವಳಿಗೆ ಸಹಾಯಮಾಡಲು ಯಾವ ಕೈಗಳೂ ಇರಲಿಲ್ಲ.</verse>
				<verse number="7">ಅವಳ ರಾಜಕುಮಾರರು ಹಿಮಕ್ಕಿಂತಲೂ ಪ್ರಕಾಶಮಾನವಾಗಿದ್ದರು. ಹಾಲಿಗಿಂತಲೂ ಬೆಳ್ಳಗಿದ್ದರು. ಅವರು ಮೈಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು. ಅವರ ಹೊಳಪು ಇಂದ್ರನೀಲ ಮಣಿಯ ಹಾಗಿತ್ತು.</verse>
				<verse number="8">ಆದರೆ ಈಗ ಅವರ ರೂಪವು ಕಲ್ಲಿದ್ದಲಿನಂತೆ ಕಪ್ಪಾಗಿದೆ. ಬೀದಿಗಳಲ್ಲಿ ಅವರು ಯಾರೆಂಬುದು ತಿಳಿಯಲಿಲ್ಲ. ಅವರ ಚರ್ಮವು ಅವರ ಎಲುಬುಗಳಿಗೆ ಹತ್ತಿಕೊಂಡಿದೆ. ಅದು ಒಣಗಿ ಕಡ್ಡಿಯ ಹಾಗೆ ಆಗಿದೆ.</verse>
				<verse number="9">ಖಡ್ಗದಿಂದ ಹತರಾದವರು ಹಸಿವೆಯಿಂದ ಹತರಾದವರಿಗಿಂತಲೂ ಲೇಸು. ಏಕೆಂದರೆ, ಇವರು ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದು, ಕ್ಷಯಿಸಿ ಹೋದರು.</verse>
				<verse number="10">ಕನಿಕರ ತುಂಬಿದ ಸ್ತ್ರೀಯರ ಕೈಗಳು ತಮ್ಮ ಸ್ವಂತ ಮಕ್ಕಳನ್ನೇ ಬೇಯಿಸಿದವು. ಇವರು ನನ್ನ ಜನರ ನಾಶದಲ್ಲಿ ಅವರಿಗೆ ಆಹಾರವಾದರು.</verse>
				<verse number="11">ಯೆಹೋವ ದೇವರು ತಮ್ಮ ರೋಷವನ್ನು ತೀರಿಸಿದ್ದಾರೆ. ಅವರು ತಮ್ಮ ಉಗ್ರವಾದ ಕೋಪವನ್ನು ಸುರಿದಿದ್ದಾರೆ. ಚೀಯೋನಿನಲ್ಲಿ ಹೊತ್ತಿಸಿದ ಬೆಂಕಿಯು ಅದರ ಅಸ್ತಿವಾರಗಳನ್ನು ತಿಂದುಬಿಟ್ಟಿತು.</verse>
				<verse number="12">ಭೂರಾಜರೂ, ವಿರೋಧಿಯೂ, ಶತ್ರುವೂ ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದ್ದನ್ನು ಪ್ರಪಂಚದ ಎಲ್ಲಾ ನಿವಾಸಿಗಳೂ ನಂಬುತ್ತಿರಲಿಲ್ಲ.</verse>
				<verse number="13">ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ, ಅವಳ ಯಾಜಕರ ಅಕ್ರಮಗಳಿಗೋಸ್ಕರವೂ ಹೀಗಾಯಿತು. ಏಕೆಂದರೆ ಇವರು ನೀತಿವಂತರ ರಕ್ತವನ್ನು ಅವರ ಮಧ್ಯದಲ್ಲಿ ಚೆಲ್ಲಿದ್ದರು.</verse>
				<verse number="14">ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು. ಅವರು ರಕ್ತದಿಂದ ತಮ್ಮನ್ನು ತಾವೇ ಕಲುಷಿತಗೊಳಿಸಿಕೊಂಡರು. ಆದ್ದರಿಂದ ಮನುಷ್ಯರು ಅವರ ವಸ್ತ್ರಗಳನ್ನು ಮುಟ್ಟಲಾರದೇ ಹೋದರು.</verse>
				<verse number="15">ಅವರು ಜನರಿಗೆ, ನೀವು ದೂರ ಹೋಗಿರಿ, ನೀವು ಅಶುದ್ಧವಾಗಿದ್ದೀರಿ; ದೂರ ಹೋಗಿರಿ, ದೂರ ಹೋಗಿರಿ, ಮುಟ್ಟಬೇಡಿರಿ, ಎಂದು ಕೂಗಿಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರುವಾಗ, ಅವರು ಇನ್ನು ಮೇಲೆ ಅಲ್ಲಿ ವಾಸಮಾಡುವುದಿಲ್ಲ, ಎಂದು ಬೇರೆ ಜನಾಂಗಗಳೊಳಗೆ ಹೇಳಿದರು.</verse>
				<verse number="16">ಯೆಹೋವ ದೇವರ ಕೋಪವು ಅವರನ್ನು ಚದುರಿಸಿತು. ಅವರು ಇನ್ನು ಅವರನ್ನು ಲಕ್ಷಿಸುವುದಿಲ್ಲ. ಅವರು ಯಾಜಕರನ್ನು ಗೌರವಿಸಲಿಲ್ಲ. ಅವರು ಹಿರಿಯರಿಗೆ ದಯೆ ತೋರಿಸಲಿಲ್ಲ.</verse>
				<verse number="17">ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ ಸಹಾಯಕ್ಕಾಗಿ ನೋಡಿ ಸೋತು ಹೋದವು. ನಮ್ಮ ಕಣ್ಣುಗಳು ನಮ್ಮನ್ನು ರಕ್ಷಿಸಲಾರದಂಥ ಜನಾಂಗಕ್ಕಾಗಿ ಕಾವಲಾಗಿದ್ದವು.</verse>
				<verse number="18">ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಶತ್ರುಗಳು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ. ನಮ್ಮ ಅಂತ್ಯವು ಸಮೀಪಿಸಿತು, ನಮ್ಮ ದಿನಗಳು ತೀರಿದವು. ಏಕೆಂದರೆ ನಮ್ಮ ಅಂತ್ಯವು ಬಂದಿತು.</verse>
				<verse number="19">ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರವಾಗಿದ್ದಾರೆ. ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ, ಅರಣ್ಯದಲ್ಲಿ ಹೊಂಚು ಹಾಕಿದರು.</verse>
				<verse number="20">ಯಾರ ವಿಷಯವಾಗಿ ನಾವು ಅವನ ನೆರಳಿನ ಕೆಳಗೆ ಬೇರೆ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿಕೊಂಡೆವೋ, ನಮ್ಮ ಮೂಗಿನ ಉಸಿರಾದ ಆ ಯೆಹೋವ ದೇವರ ಅಭಿಷಿಕ್ತನು ಅವರ ಬಲೆಗಳಲ್ಲಿ ಸಿಕ್ಕಿಕೊಂಡನು.</verse>
				<verse number="21">ಎದೋಮಿನ ಪುತ್ರಿಯೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು ಮತ್ತು ಸಂತೋಷಪಡು; ಆದರೆ ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವುದು. ನೀನು ಕುಡಿದು, ಬೆತ್ತಲೆಯಾಗಿರುವೆ.</verse>
				<verse number="22">ಚೀಯೋನ್ ಪುತ್ರಿಯೇ, ನಿನ್ನ ಅಕ್ರಮದ ಶಿಕ್ಷೆಯು ತೀರಿ ಹೋಯಿತು. ಅವರು ಇನ್ನು ಮೇಲೆ ನಿನ್ನ ಗಡಿಪಾರನ್ನು ಹೆಚ್ಚಿಸುವುದಿಲ್ಲ. ಎದೋಮಿನ ಪುತ್ರಿಯೇ, ಅವರು ನಿನ್ನ ಅಕ್ರಮವನ್ನು ವಿಚಾರಿಸುವನು. ಆತನು ನಿನ್ನ ಪಾಪಗಳನ್ನು ಬಹಿರಂಗಪಡಿಸುವರು.</verse>
			</chapter>
			<chapter number="5">
				<verse number="1">ಯೆಹೋವ ದೇವರೇ, ನಮಗೆ ಏನು ಸಂಭವಿಸಿದೆ ಎಂದು ಜ್ಞಾಪಕಮಾಡಿಕೊಳ್ಳಿರಿ. ಪರಿಗಣಿಸಿ, ನಮ್ಮ ನಿಂದೆಯನ್ನು ನೋಡಿರಿ.</verse>
				<verse number="2">ನಮ್ಮ ಸ್ವಾಸ್ತ್ಯವು ಅಪರಿಚಿತರಿಗೂ, ನಮ್ಮ ಮನೆಗಳು ಪರರಿಗೂ ವಶವಾದವು.</verse>
				<verse number="3">ನಾವು ಅನಾಥರು, ತಂದೆ ಇಲ್ಲದವರು, ನಮ್ಮ ತಾಯಂದಿರು ವಿಧವೆಯರು.</verse>
				<verse number="4">ನಾವು ನಮ್ಮ ನೀರನ್ನು ಹಣಕೊಟ್ಟು ಕುಡಿಯಬೇಕಾಗಿದೆ. ನಮ್ಮ ಸೌದೆಯು ನಮಗೇ ಮಾರಲಾಗಿದೆ.</verse>
				<verse number="5">ನಮ್ಮನ್ನು ಹಿಂಬಾಲಿಸುವವರು ನಮ್ಮ ನೆರಳಿನಲ್ಲೇ ಇದ್ದಾರೆ; ನಾವು ದಣಿದಿದ್ದೇವೆ ಮತ್ತು ವಿಶ್ರಾಂತಿಯನ್ನು ಕಾಣುವುದಿಲ್ಲ.</verse>
				<verse number="6">ಸಾಕಷ್ಟು ರೊಟ್ಟಿಯನ್ನು ಪಡೆಯಲು ನಾವು ಈಜಿಪ್ಟ್ ಮತ್ತು ಅಸ್ಸೀರಿಯಕ್ಕೆ ಅಧೀನರಾಗಿದ್ದೇವೆ.</verse>
				<verse number="7">ನಮ್ಮ ತಂದೆಗಳು ಪಾಪಮಾಡಿ ಇಲ್ಲವಾದರು. ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.</verse>
				<verse number="8">ಆಳುಗಳು ನಮ್ಮ ಮೇಲೆ ಆಳಿದ್ದಾರೆ. ಯಾರೂ ಅವರ ಕೈಯಿಂದ ನಮ್ಮನ್ನು ತಪ್ಪಿಸುವುದಿಲ್ಲ.</verse>
				<verse number="9">ಅಡವಿಯ ಖಡ್ಗದ ನಿಮಿತ್ತ ಪ್ರಾಣ ಸಂಕಟದಿಂದ ನಮಗೆ ರೊಟ್ಟಿ ಸಿಕ್ಕಿದೆ.</verse>
				<verse number="10">ಭಯಂಕರವಾದ ಕ್ಷಾಮದಿಂದ ನಮ್ಮ ಚರ್ಮ ಒಲೆಯ ಹಾಗೆ ಕಪ್ಪಾಗಿದೆ.</verse>
				<verse number="11">ಅವರು ಚೀಯೋನಿನಲ್ಲಿ ಸ್ತ್ರೀಯರ ಮೇಲೆ ಮತ್ತು ಯೆಹೂದದ ನಗರಗಳಲ್ಲಿ ಕನ್ಯೆಯರ ದೌರ್ಜನ್ಯ ಮಾಡಲಾಗಿದೆ.</verse>
				<verse number="12">ರಾಜಕುಮಾರರ ಕೈಗಳನ್ನು ಗಲ್ಲಿಗೆ ನೇತುಹಾಕಿದ್ದಾರೆ. ಹಿರಿಯರಿಗೆ ಗೌರವವಿಲ್ಲ.</verse>
				<verse number="13">ಅವರು ಯೌವನಸ್ಥರನ್ನು ಅರೆಯುವುದಕ್ಕೆ ತೆಗೆದುಕೊಂಡರು ಮತ್ತು ಹುಡುಗರು ಕಟ್ಟಿಗೆಯ ಕೆಳಗೆ ಬಿದ್ದರು.</verse>
				<verse number="14">ಪಟ್ಟಣದ ದ್ವಾರದಿಂದ ಹಿರಿಯರು ಹೋಗಿದ್ದಾರೆ. ಯುವಜನರು ತಮ್ಮ ಸಂಗೀತವನ್ನು ನಿಲ್ಲಿಸಿದ್ದಾರೆ.</verse>
				<verse number="15">ನಮ್ಮ ಹೃದಯಾನಂದವು ತೀರಿತು. ನಮ್ಮ ನರ್ತನವು ಶೋಕವಾಗಿ ಮಾರ್ಪಟ್ಟಿತು.</verse>
				<verse number="16">ಕಿರೀಟವು ನಮ್ಮ ತಲೆಯ ಮೇಲಿನಿಂದ ಬಿದ್ದುಹೋಯಿತು. ಅಯ್ಯೋ, ನಾವು ಪಾಪಮಾಡಿದ್ದೇವೆ.</verse>
				<verse number="17">ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ. ಏಕೆಂದರೆ ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.</verse>
				<verse number="18">ಏಕೆಂದರೆ ಚೀಯೋನ್ ಪರ್ವತವು ಹಾಳಾಗಿರುವುದರಿಂದಲೇ ನರಿಗಳು ಅವುಗಳ ಮೇಲೆ ತಿರುಗಾಡುವುವು.</verse>
				<verse number="19">ಯೆಹೋವ ದೇವರೇ, ನೀವು ಎಂದೆಂದಿಗೂ ಇರುತ್ತೀರಿ. ನಿಮ್ಮ ಸಿಂಹಾಸನವು ತಲತಲಾಂತರಗಳವರೆಗೂ ಇರುವುದು.</verse>
				<verse number="20">ನೀವು ನಮ್ಮನ್ನು ಯಾವಾಗಲೂ ಮರೆಯುವುದೇಕೆ? ಇಷ್ಟುಕಾಲ ನಮ್ಮನ್ನು ಮರೆತಿರುವುದೇಕೆ?</verse>
				<verse number="21">ಯೆಹೋವ ದೇವರೇ, ನಾವು ನಿಮ್ಮ ಕಡೆ ಹಿಂದಿರುಗುವಂತೆ, ನಮ್ಮನ್ನು ನಿಮ್ಮ ಕಡೆಗೆ ಪುನಃ ಸ್ಥಾಪಿಸಿಕೊಳ್ಳಿ. ನಮ್ಮ ದಿನಗಳನ್ನು ಹಿಂದಿನಂತೆಯೇ ನವೀಕರಿಸಿರಿ.</verse>
				<verse number="22">ಯೆಹೋವ ದೇವರೇ, ನೀವು ನಮ್ಮ ಮೇಲೆ ಮಿತಿಮೀರಿ ಸಿಟ್ಟುಗೊಂಡಿರುವಿರೋ? ನಮ್ಮನ್ನು ಸಂಪೂರ್ಣವಾಗಿ ಕೈಬಿಟ್ಟಿರುವಿರೋ?</verse>
			</chapter>
		</book>
		<book number="26">
			<chapter number="1">
				<verse number="1">ನಾನು ಸೆರೆಯವರ ಜೊತೆ ಕೆಬಾರ್ ನದಿಯ ಬಳಿಯಲ್ಲಿರುವಾಗ ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ, ಐದನೆಯ ದಿನದಲ್ಲಿ ಆಕಾಶ ತೆರೆಯಿತು. ನಾನು ದೇವರ ದರ್ಶನಗಳನ್ನು ಕಂಡೆನು.</verse>
				<verse number="2">ತಿಂಗಳಿನ ಐದನೆಯ ದಿನದಲ್ಲಿ ಅರಸನಾದ ಯೆಹೋಯಾಕೀನನ ಸೆರೆಯ ಐದನೆಯ ವರ್ಷದಲ್ಲಿ,</verse>
				<verse number="3">ಯೆಹೋವ ದೇವರ ವಾಕ್ಯವು ಬಾಬಿಲೋನಿಯರ ದೇಶದ ಕೆಬಾರ್ ನದಿಯ ಬಳಿಯಲ್ಲಿ, ಬೂಜಿಯ ಮಗ ಹಾಗೂ ಯಾಜಕ ಆಗಿರುವ ಯೆಹೆಜ್ಕೇಲನಿಗೆ ಸ್ಪಷ್ಟವಾಗಿ ಬಂದಿತು ಮತ್ತು ಅಲ್ಲಿ ಯೆಹೋವ ದೇವರ ಕೈ ಅವನ ಮೇಲಿತ್ತು.</verse>
				<verse number="4">ನಾನು ಕಂಡ ದರ್ಶನ ಹೀಗಿತ್ತು: ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿ ಬೀಸಿತು. ಎಡೆಬಿಡದೆ ಝಗಝಗಿಸುವ ಜ್ವಾಲೆಯಿಂದ ಕೂಡಿದ ಮಹಾ ಮೇಘವೊಂದು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು. ಅದರ ನಡುವೆ ಜ್ವಾಲೆಯ ಮಧ್ಯೆ ಹೊಳೆಯುವ ಲೋಹ ಬೆಳಗಿತು.</verse>
				<verse number="5">ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ರೂಪವು ಹೊರಟಿತು. ಅವುಗಳಿಗೆ ಮನುಷ್ಯನ ರೂಪವಿತ್ತು.</verse>
				<verse number="6">ಪ್ರತಿಯೊಂದಕ್ಕೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು.</verse>
				<verse number="7">ಅವುಗಳ ಕಾಲುಗಳು ನೆಟ್ಟಗಿದ್ದು, ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು, ಕಂಚಿಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು.</verse>
				<verse number="8">ಅವುಗಳ ರೆಕ್ಕೆಗಳ ಕೆಳಗೆ ನಾಲ್ಕು ಪಕ್ಕೆಗಳ ಮೇಲೆ ಮನುಷ್ಯನ ಕೈಗಳು ಇದ್ದವು. ಆ ನಾಲ್ಕಕ್ಕೂ ಮುಖಗಳು, ರೆಕ್ಕೆಗಳು ಇದ್ದವು.</verse>
				<verse number="9">ಅವುಗಳ ರೆಕ್ಕೆಗಳು ಪರಸ್ಪರರ ರೆಕ್ಕೆಗಳನ್ನು ಸ್ಪರ್ಶಿಸುತ್ತಿದ್ದವು. ಪ್ರತಿಯೊಂದೂ ನೇರವಾಗಿ ಮುಂದೆ ಹೋಗುತ್ತಿದ್ದವು ಮತ್ತು ಅವರು ತಿರುಗದೆ ಮುಂದೆ ಸಾಗುತ್ತಿದ್ದರು.</verse>
				<verse number="10">ಅವುಗಳ ಮುಖಗಳು ಹೀಗಿದ್ದವು: ಪ್ರತಿಯೊಂದರ ಮುಂದಿನ ನಾಲ್ಕು ಮುಖಗಳು ಮನುಷ್ಯನ ಮುಖದಂತಿತ್ತು; ಬಲಗಡೆಯ ನಾಲ್ಕು ಮುಖಗಳು ಸಿಂಹದ ಮುಖದಂತಿತ್ತು; ಎಡಗಡೆಯ ನಾಲ್ಕು ಮುಖಗಳು ಹೋರಿಯ ಮುಖದಂತಿತ್ತು; ಹಿಂದಿನ ನಾಲ್ಕು ಮುಖಗಳು ಗರುಡಪಕ್ಷಿಯ ಮುಖದಂತಿತ್ತು.</verse>
				<verse number="11">ಅವುಗಳ ಮುಖಗಳು ಹೀಗಿದ್ದವು. ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಿಕೊಂಡಿದ್ದವು. ಪ್ರತಿಯೊಂದಕ್ಕೂ ಎರಡು ರೆಕ್ಕೆಗಳಿದ್ದು, ಒಂದಕ್ಕೊಂದು ಅಂಟಿಕೊಂಡಿದ್ದವು. ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು.</verse>
				<verse number="12">ಅವೆಲ್ಲವೂ ನೆಟ್ಟಗೆ ಮುಂದಕ್ಕೆ ಹೋದವು. ಅವುಗಳ ಆತ್ಮವು ಎಲ್ಲಿಗೆ ಹೋಗಬೇಕಿತ್ತೋ, ಅಲ್ಲಿಗೇ ಹೋದವು, ಹೋಗುವಾಗ ಅವು ತಿರುಗಿಕೊಳ್ಳಲಿಲ್ಲ.</verse>
				<verse number="13">ಆ ಜೀವಿಗಳ ಮಧ್ಯೆ ಅದ್ಭುತ ಕಾಂತಿಯೊಂದು ಉರಿಯುವ ಕೆಂಡಗಳೋ, ಪಂಜುಗಳೋ ಎಂಬಂತೆ ಕಾಣಿಸಿತು. ಅದು ಆ ಜೀವಿಗಳ ನಡುವೆ ಓಲಾಡುತ್ತಿತ್ತು. ಆ ಉರಿ ತೇಜೋಮಯವಾಗಿತ್ತು. ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.</verse>
				<verse number="14">ಆ ಜೀವಿಗಳು ಮಿಂಚಿನ ಹಾಗೆ ಓಡುತ್ತಾ ತಿರುಗಾಡುತ್ತಾ ಇದ್ದವು.</verse>
				<verse number="15">ಆಗ ನಾನು ಆ ಜೀವಿಗಳನ್ನು ನೋಡಲಾಗಿ, ಜೀವಿಗಳ ಪಕ್ಕದಲ್ಲಿ ಭೂಮಿಯ ಮೇಲೆ ಒಂದು ಚಕ್ರವು ನಾಲ್ಕು ಮುಖವುಳ್ಳದ್ದಾಗಿರುವುದನ್ನು ನಾನು ನೋಡಿದೆನು.</verse>
				<verse number="16">ಆ ಚಕ್ರಗಳ ಆಕಾರವೂ, ಅವುಗಳ ಕೆಲಸವೂ ಪೀತರತ್ನದ ವರ್ಣದ ಹಾಗಿದೆ. ಆ ನಾಲ್ಕಕ್ಕೆ ಒಂದೇ ಮಾದರಿಯಾಗಿದ್ದವು. ಅವುಗಳ ಆಕಾರವೂ, ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು.</verse>
				<verse number="17">ಅವು ಚಲಿಸುವಾಗ ತಮ್ಮ ನಾಲ್ಕು ಪಕ್ಕೆಗಳ ಮೇಲೆ ಹೋದವು ಮತ್ತು ಅವು ಹೋಗುವಾಗ ತಿರುಗಲಿಲ್ಲ.</verse>
				<verse number="18">ಅವುಗಳ ಚಕ್ರಗಳು ಎತ್ತರವಾಗಿಯೂ, ಭಯಂಕರವಾಗಿಯೂ ಇದ್ದವು. ಆ ನಾಲ್ಕು ಚಕ್ರಗಳ ಸುತ್ತಲೂ ಅನೇಕ ಕಣ್ಣುಗಳಿದ್ದವು.</verse>
				<verse number="19">ಜೀವಿಗಳು ಹೋಗುವಾಗ ಆ ಚಕ್ರಗಳು ಅವುಗಳ ಬಳಿಯಲ್ಲೇ ಹೋದವು. ಆ ಜೀವಿಗಳು ಭೂಮಿಯಿಂದ ಮೇಲಕ್ಕೆ ಏಳುವಾಗ, ಚಕ್ರಗಳು ಮೇಲಕ್ಕೆ ಏಳುತ್ತಿದ್ದವು.</verse>
				<verse number="20">ಆತ್ಮವು ಎಲ್ಲಿಗೆ ಹೋಗಬೇಕಿತ್ತೋ, ಅಲ್ಲಿಗೇ ಅವುಗಳು ಹೋದವು. ಚಕ್ರಗಳು ಸಹ ಅವುಗಳಿಗೆದುರಾಗಿ ಮೇಲಕ್ಕೆ ಏಳುತ್ತಿದ್ದವು. ಏಕೆಂದರೆ ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು.</verse>
				<verse number="21">ಆ ಜೀವಿಗಳು ಮುಂದುವರಿಯುವಾಗ, ಚಕ್ರಗಳೂ ಮುಂದುವರಿಯುತ್ತಿದ್ದವು. ಅವು ನಿಂತು ಹೋಗುವಾಗ, ಇವೂ ನಿಂತು ಹೋಗುತ್ತಿದ್ದವು. ಅವು ನೆಲದಿಂದ ಮೇಲಕ್ಕೆ ಏಳುವಾಗ, ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು. ಏಕೆಂದರೆ ಆ ಜೀವಿಗಳ ಆತ್ಮ ಚಕ್ರಗಳಲ್ಲಿಯೂ ಇತ್ತು.</verse>
				<verse number="22">ಜೀವಿಯ ತಲೆಗಳ ಮೇಲೆ ಗಗನ ಮಂಡಲ ವಿಶಾಲ ರೂಪವು ವಜ್ರದಂತಿತ್ತು. ಮತ್ತು ಅದು ಅದ್ಭುತವಾಗಿತ್ತು.</verse>
				<verse number="23">ಆ ಗಗನ ಮಂಡಲದ ಕೆಳಗೆ ಆ ಜೀವಿಗಳ ರೆಕ್ಕೆಗಳು ಒಂದರ ಕಡೆಗೆ ಒಂದರಂತೆ ಚಾಚಿದವು. ಇದಲ್ಲದೆ ಒಂದೊಂದು ಜೀವಿಗೆ ದೇಹವನ್ನು ಮುಚ್ಚಿಕೊಳ್ಳುವ ಎರಡೆರಡು ರೆಕ್ಕೆಗಳಿದ್ದವು.</verse>
				<verse number="24">ಅವು ಚಲಿಸುವಾಗ, ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು. ಅದು ಜಲಪ್ರವಾಹದ ಶಬ್ದದಂತೆಯೂ, ಸರ್ವಶಕ್ತರ ಧ್ವನಿಯ ಹಾಗೆಯೂ, ಸೈನ್ಯದ ಶಬ್ದದ ಹಾಗೆಯೂ ಇತ್ತು. ಅವು ನಿಲ್ಲುವಾಗ ಅವುಗಳ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು.</verse>
				<verse number="25">ಅವುಗಳು ನಿಂತು, ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸಿದಾಗ, ಅವುಗಳ ತಲೆಗಳ ಮೇಲಿರುವ ಗಗನ ಮಂಡಲದೊಳಗಿಂದ ಒಂದು ಶಬ್ದವಾಯಿತು.</verse>
				<verse number="26">ಅವುಗಳ ತಲೆಗಳ ಮೇಲಿರುವ ಗಗನ ಮಂಡಲದ ಮೇಲ್ಭಾಗದಲ್ಲಿ ನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.</verse>
				<verse number="27">ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಲೋಹವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತ ಕಾಂತಿಯನ್ನು ನಾನು ಕಂಡೆನು.</verse>
				<verse number="28">ಮಳೆ ಬೀಳುವ ದಿನದಲ್ಲಿ ಮೇಘದಲ್ಲಿ ಮಳೆಬಿಲ್ಲು ಹೇಗೆ ಕಾಣಿಸುವುದೋ ಹಾಗೆ ಅದರ ಸುತ್ತಲೂ ಆ ಪ್ರಕಾಶವು ಕಾಣಿಸಿತು. ಇದೇ ಯೆಹೋವ ದೇವರ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ಕಂಡಾಗ ನಾನು ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು ಮತ್ತು ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.</verse>
			</chapter>
			<chapter number="2">
				<verse number="1">ಯೆಹೋವ ದೇವರು ನನಗೆ, “ಮನುಷ್ಯಪುತ್ರನೇ, ಎದ್ದು ನಿಲ್ಲು, ನಿನ್ನ ಸಂಗಡ ಮಾತನಾಡಬೇಕು.”</verse>
				<verse number="2">ಹೀಗೆ ಅವರು ನನ್ನ ಸಂಗಡ ಮಾತನಾಡುವಾಗ, ದೇವರಾತ್ಮರು ನನ್ನೊಳಗೆ ಪ್ರವೇಶಿಸಿ, ನನ್ನನ್ನು ನಿಂತುಕೊಳ್ಳುವಂತೆ ಮಾಡಿದರು. ಆಗ ಅವರು ನನ್ನೊಂದಿಗೆ ಮಾತನಾಡುವುದನ್ನು ಚೆನ್ನಾಗಿ ಕೇಳಿದೆನು.</verse>
				<verse number="3">ಅವರು, “ಮನುಷ್ಯಪುತ್ರನೇ, ನನಗೆ ವಿರೋಧವಾಗಿ ತಿರುಗಿ ಬಿದ್ದಿರುವ ಮತ್ತು ದ್ರೋಹಮಾಡಿದ ಜನಾಂಗದವರಾದ ಇಸ್ರಾಯೇಲರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ. ಅವರೂ, ಅವರ ಪಿತೃಗಳೂ ಇಂದಿನವರೆಗೂ ನನಗೆ ವಿರೋಧವಾಗಿ ದ್ರೋಹ ಮಾಡಿದ್ದಾರೆ.</verse>
				<verse number="4">ಅವರು ಕಠಿಣ ಹೃದಯದವರು ಮತ್ತು ಹಠಮಾರಿ ಆಗಿದ್ದಾರೆ. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತೇನೆ. ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ,’ ಎಂದು ಹೇಳಬೇಕು.</verse>
				<verse number="5">ಅವರು ಕೇಳಲಿ ಅಥವಾ ಕೇಳದೇ ಇರಲಿ, ಏಕೆಂದರೆ ಅವರು ತಿರುಗಿಬೀಳುವ ಜನರು, ಆದರೆ ತಮ್ಮೊಳಗೆ ಪ್ರವಾದಿ ಇರುವನೆಂದು ತಿಳಿದುಕೊಂಡರೆ ಸಾಕು.</verse>
				<verse number="6">ಮನುಷ್ಯಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು, ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ, ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು. ಅವರು ದ್ರೋಹಿ ವಂಶದವರು. ಅವರ ಬಿರುನುಡಿಗೆ ದಿಗಿಲು ಪಡಬೇಡ.</verse>
				<verse number="7">ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು. ಅವರು ಕೇಳಿದರೂ ಸರಿ, ಕೇಳದಿದ್ದರೂ ಸರಿ, ಏಕೆಂದರೆ ಅವರು ತಿರುಗಿಬೀಳುವ ಜನರು.</verse>
				<verse number="8">ಆದರೆ ಮನುಷ್ಯಪುತ್ರನೇ, ನೀನಾದರೋ ನಾನು ಹೇಳುವುದನ್ನು ಕೇಳು: ಆ ತಿರುಗಿಬೀಳುವ ಜನರ ಹಾಗೆ ನೀನೂ ತಿರುಗಿಬೀಳಬೇಡ. ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವುದನ್ನು ತಿನ್ನು,” ಎಂದರು.</verse>
				<verse number="9">ಇಗೋ, ನಾನು ನೋಡುತ್ತಿದ್ದಂತೆ ಒಂದು ಕೈ ನನ್ನ ಕಡೆಗೆ ಚಾಚಿತ್ತು. ಅದರಲ್ಲಿ ಗ್ರಂಥದ ಸುರುಳಿಯೊಂದು ಕಾಣಿಸಿತು.</verse>
				<verse number="10">ಆ ಸುರುಳಿಯನ್ನು ನನ್ನೆದುರಿನಲ್ಲೇ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಪ್ರಲಾಪ, ಶೋಕ ಮತ್ತು ಶಾಪದ ಪದಗಳನ್ನು ಬರೆಯಲಾಗಿತ್ತು.</verse>
			</chapter>
			<chapter number="3">
				<verse number="1">ಇದಾದ ಮೇಲೆ ದೇವರು ನನಗೆ, “ಮನುಷ್ಯಪುತ್ರನೇ, ನಿನಗೆ ಸಿಕ್ಕಿದ್ದ ಈ ಸುರುಳಿಯನ್ನು ತಿಂದು, ಹೋಗಿ ಇಸ್ರಾಯೇಲಿನ ಜನರ ಸಂಗಡ ಮಾತನಾಡು,” ಎಂದರು.</verse>
				<verse number="2">ಆಗ ನಾನು ನನ್ನ ಬಾಯನ್ನು ತೆರೆದೆನು, ಅವರು ನನಗೆ ತಿನ್ನುವುದಕ್ಕೆ ಸುರುಳಿಯನ್ನು ಕೊಟ್ಟರು.</verse>
				<verse number="3">ಆಗ ಅವರು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು, ಹೊಟ್ಟೆಯನ್ನು ತುಂಬಿಸಿಕೋ,” ಎಂದರು. ಆಗ ನಾನು ಅದನ್ನು ತಿಂದೆನು. ಅದು ನನ್ನ ಬಾಯಲ್ಲಿ ಜೇನಿನ ಹಾಗೆ ಸಿಹಿಯಾಗಿತ್ತು.</verse>
				<verse number="4">ನನಗೆ ಅವರು, “ಮನುಷ್ಯಪುತ್ರನೇ, ಹೋಗು; ಇಸ್ರಾಯೇಲಿನ ಜನರ ಬಳಿಗೆ ಹೋಗಿ, ನನ್ನ ಮಾತುಗಳನ್ನು ಅವರಿಗೆ ಹೇಳು.</verse>
				<verse number="5">ನಿನ್ನನ್ನು ಅಸ್ಪಷ್ಟ ಭಾಷೆಯ ಮತ್ತು ಅನ್ಯಭಾಷೆಯ ಜನರ ಬಳಿಗೆ ಕಳುಹಿಸದೆ, ಇಸ್ರಾಯೇಲಿನ ಜನರ ಬಳಿಗೆ ಕಳುಹಿಸುತ್ತಿದ್ದೇನೆ.</verse>
				<verse number="6">ನಾನು ನಿನ್ನನ್ನು ಅಸ್ಪಷ್ಟ ಮಾತು ಮತ್ತು ಅನ್ಯಭಾಷೆ ಹೊಂದಿರುವ ಅನೇಕ ಜನರ ಬಳಿ ಕಳುಹಿಸುತ್ತಿಲ್ಲ. ಏಕೆಂದರೆ ಅವರ ಪದಗಳು ನಿಮಗೆ ಅರ್ಥವಾಗುವುದಿಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ, ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.</verse>
				<verse number="7">ಆದರೆ ಇಸ್ರಾಯೇಲಿನ ಜನರೋ ನಿನ್ನ ಮಾತನ್ನು ಕೇಳಲು ಸಿದ್ಧರಿಲ್ಲ. ಏಕೆಂದರೆ ಅವರು ನನ್ನ ಮಾತನ್ನು ಕೇಳಲು ಸಿದ್ಧರಿಲ್ಲ. ಅವರೆಲ್ಲರು ಗರ್ವಿಗಳು ಹಾಗೂ ಹಟಮಾರಿಗಳು.</verse>
				<verse number="8">ಆದರೆ ನಾನು ನಿನ್ನ ಮುಖವನ್ನು ಅವರ ಮುಖಗಳ ಎದುರಿಗೆ ಕಠಿಣ ಮಾಡಿದ್ದೇನೆ. ಅವರ ಹಟಮಾರಿತನಕ್ಕೆ ಪ್ರತಿಯಾಗಿ, ನಿನ್ನನ್ನು ಹಟವಾದಿಯನ್ನಾಗಿಸುವೆನು.</verse>
				<verse number="9">ನಾನು ನಿನ್ನ ಹಣೆಯನ್ನು ಅತ್ಯಂತ ಕಠಿಣವಾದ ಕಲ್ಲಿನಂತೆಯೂ ವಜ್ರದಂತೆಯೂ ಮಾಡುವೆನು. ಅವರು ತಿರುಗಿಬೀಳುವ ಜನರಾದರೂ ನೀನು ಅವರಿಗೆ ಭಯಪಡಬೇಡ ಅಥವಾ ಗಾಬರಿಯಾಗಬೇಡ,” ಎಂದರು.</verse>
				<verse number="10">ಇದಲ್ಲದೆ ಅವರು ನನಗೆ, “ಮನುಷ್ಯಪುತ್ರನೇ, ನಾನು ನಿನ್ನ ಸಂಗಡ ಆಡುವ ಈ ನನ್ನ ಮಾತುಗಳನ್ನೆಲ್ಲಾ ಕೇಳಿ ಹೃದಯದಲ್ಲಿ ಅಂಗೀಕರಿಸಿಕೋ.</verse>
				<verse number="11">ಸೆರೆಯಾಗಿರುವ ನಿನ್ನ ಜನರ ಬಳಿಗೆ ಹೋಗಿ, ಅವರ ಸಂಗಡ ಮಾತನಾಡು. ಅವರು ಕೇಳಿದರೂ ಕೇಳದಿದ್ದರೂ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ,’ ಎಂದು ಅವರಿಗೆ ಹೇಳು,” ಎಂದನು.</verse>
				<verse number="12">ಆಮೇಲೆ ದೇವರಾತ್ಮರು ನನ್ನನ್ನು ಎತ್ತಿಕೊಂಡು ಹೋದರು. ಮಹಿಮೆಯಿಂದ ಕೂಡಿದ ಯೆಹೋವ ದೇವರ ಮಹಿಮೆಯು ಅವರ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ ಎಂಬ ಮಹಾಶಬ್ದವು ನನ್ನ ಹಿಂದೆ ಕೇಳಿಸಿತು.</verse>
				<verse number="13">ನಾನು ಒಂದಕ್ಕೊಂದು ತಗಲುವ ಆ ಜೀವಿಗಳ ರೆಕ್ಕೆಗಳ ಶಬ್ದವನ್ನೂ, ಅವುಗಳ ಬಳಿಯಲ್ಲಿದ್ದ ಚಕ್ರಗಳ ಶಬ್ದವನ್ನೂ, ಮಹಾ ಘೋಷದ ಶಬ್ದವು ನುಗ್ಗಿ ಬರುತ್ತಿರುವುದನ್ನೂ ಕೇಳಿದೆನು.</verse>
				<verse number="14">ಹೀಗೆ ದೇವರಾತ್ಮರು ನನ್ನನ್ನು ಎತ್ತಿಕೊಂಡು ಹೋದರು. ನಾನು ಕಹಿತನ ಮತ್ತು ಕೋಪದ ಆತ್ಮದಿಂದ ಮುನ್ನಡೆದೆನು. ಆದರೆ ಯೆಹೋವ ದೇವರ ಕೈ ನನ್ನ ಮೇಲೆ ಬಲವಾಗಿತ್ತು.</verse>
				<verse number="15">ಆಮೇಲೆ ನಾನು ಕೆಬಾರ್ ನದಿಯ ದಡದಲ್ಲಿ ವಾಸಿಸುತ್ತಿದ್ದ ತೆಲ್ ಅಬೀಬಿನ ಸೆರೆಯವರ ಬಳಿಗೆ ಬಂದೆನು. ನಾನು ಬಹು ದುಃಖಿತನಾಗಿ ಅವರು ಕುಳಿತಿದ್ದ ಕಡೆಗೆ ನಾನು ಏಳು ದಿನಗಳ ಕಾಲ ಅವರ ಜೊತೆಗೆ ಕುಳಿತುಕೊಂಡೆನು.</verse>
				<verse number="16">ಏಳು ದಿವಸಗಳಾದ ಮೇಲೆ ಯೆಹೋವ ದೇವರ ವಾಕ್ಯವು ನನಗೆ ಬಂದು,</verse>
				<verse number="17">“ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಆದ್ದರಿಂದ ನೀನು ನನ್ನ ಬಾಯಿಂದ ಹೊರಡುವ ವಾಕ್ಯವನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.</verse>
				<verse number="18">ನಾನು ದುಷ್ಟನಿಗೆ, ‘ನೀನು ನಿಶ್ಚಯವಾಗಿ ಸಾಯುವೆ,’ ಎಂದು ಹೇಳುವಾಗ, ನೀನು ಅವನನ್ನು ಎಚ್ಚರಿಸದೆ, ಅವನು ತನ್ನ ದುರ್ಮಾರ್ಗಗಳನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ನೀನು ಅವನಿಗೆ ಬುದ್ಧಿಹೇಳದೆ ಹೋದರೆ, ಆ ದುಷ್ಟ ಮನುಷ್ಯನು ತನ್ನ ಪಾಪಗಳಿಂದಲೇ ಸಾಯಬೇಕಾಗುವದು; ಆದರೆ ಅವನ ಸಾವಿಗೆ ನಿನ್ನನ್ನೇ ಹೊಣೆಮಾಡುವೆನು.</verse>
				<verse number="19">ಆದರೆ ನೀನು ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ, ದುರ್ಮಾರ್ಗವನ್ನೂ ಬಿಟ್ಟು ತಿರುಗಿಕೊಳ್ಳದೆ ಹೋದರೆ, ಅವನು ತನ್ನ ಪಾಪಗಳಿಂದಲೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.</verse>
				<verse number="20">“ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡತಡೆಯನ್ನು ಇಡುವೆನು, ಅವನು ಸಾಯುವನು. ನೀನು ಅವನನ್ನು ಎಚ್ಚರಿಸದೆ ಇದ್ದುದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು. ಅವನು ಮಾಡಿರುವ ಸುಕೃತ್ಯಗಳು ಲೆಕ್ಕಕ್ಕೆ ಬರುವುದಿಲ್ಲ. ಆದರೆ ಅವನ ಸಾವಿಗೆ ನೀನೇ ಹೊಣೆಯಾಗುವೆ.</verse>
				<verse number="21">ಆದರೂ ನೀತಿವಂತನು ಪಾಪಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡರೆ, ಈ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”</verse>
				<verse number="22">ಆಗ ಅಲ್ಲಿ ಯೆಹೋವ ದೇವರ ಹಸ್ತವು ನನ್ನ ಮೇಲಿತ್ತು. ನನಗೆ ಅವರು ಹೇಳಿದ್ದೇನೆಂದರೆ, “ಎದ್ದೇಳು, ಬಯಲು ಸೀಮೆಗೆ ಹೋಗು ಮತ್ತು ಅಲ್ಲಿ ನಾನು ನಿನ್ನ ಸಂಗಡ ಮಾತನಾಡುವೆನು.”</verse>
				<verse number="23">ಆಮೇಲೆ ನಾನು ಎದ್ದು ಬಯಲುಸೀಮೆಯ ಕಡೆಗೆ ಹೋದೆನು. ಯೆಹೋವ ದೇವರ ಮಹಿಮೆಯು ಅಲ್ಲಿ ನಿಂತಿತ್ತು. ಅದು ಕೆಬಾರ್ ನದಿಯ ಹತ್ತಿರ ನಾನು ನೋಡಿದ ಮಹಿಮೆಯ ಪ್ರಕಾರವಾಗಿತ್ತು. ಅದನ್ನು ಕಂಡು ನಾನು ಅಡ್ಡ ಬಿದ್ದೆನು.</verse>
				<verse number="24">ಆಮೇಲೆ ದೇವರಾತ್ಮ ನನ್ನೊಳಗೆ ಪ್ರವೇಶಿಸಿ, ನನ್ನನ್ನು ನನ್ನ ಪಾದದ ಮೇಲೆ ನಿಲ್ಲಿಸಿ ಮಾತನಾಡಿ, ನನಗೆ ಹೇಳಿದ್ದೇನೆಂದರೆ, “ಹೋಗು, ನಿನ್ನ ಮನೆಯಲ್ಲಿ ನೀನು ಅಡಗಿಕೋ.</verse>
				<verse number="25">ಮನುಷ್ಯಪುತ್ರನೇ, ಇಗೋ, ಅವರು ನಿನ್ನನ್ನು ಹಗ್ಗಗಳಿಂದ ಕಟ್ಟುವರು. ನೀನು ಅವರಿಂದ ಹೊರಗೆ ಹೋಗಲು ಆಗುವುದಿಲ್ಲ.</verse>
				<verse number="26">ಇದಲ್ಲದೆ ನಾನು ನಿನ್ನ ನಾಲಿಗೆ ಸೇದಿ ಹೋಗುವಹಾಗೆ ಮಾಡುವೆನು. ಆಗ ನೀನು ಮೂಕನಾಗಿ ಅವರನ್ನು ಗದರಿಸುವವನಾಗಲಾರೆ. ಅವರು ತಿರುಗಿಬೀಳುವ ಜನರಾಗಿದ್ದಾರೆ.</verse>
				<verse number="27">ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆಯುವೆನು. ಆಗ ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ.’ ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಏಕೆಂದರೆ ಅವರು ತಿರುಗಿಬೀಳುವ ಜನರಾಗಿದ್ದಾರೆಂದು ಹೇಳಬೇಕು.</verse>
			</chapter>
			<chapter number="4">
				<verse number="1">“ಮನುಷ್ಯಪುತ್ರನೇ, ನೀನು ಒಂದು ಇಟ್ಟಿಗೆಯನ್ನು ತೆಗೆದುಕೊಂಡು, ನಿನ್ನ ಮುಂದಿಟ್ಟುಕೊಂಡು, ಅದರ ಮೇಲೆ ಯೆರೂಸಲೇಮ್ ನಗರದ ನಕ್ಷೆಯನ್ನು ಬರೆ.</verse>
				<verse number="2">ಆ ನಕ್ಷೆಯ ಸುತ್ತಲು ದಿಬ್ಬ ಹಾಕಿ, ಒಡ್ಡು ಕಟ್ಟಿ, ಪಾಳೆಯಗಳನ್ನು ಮಾಡಿ, ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ, ಅದನ್ನು ಮುತ್ತಿಗೆ ಹಾಕು.</verse>
				<verse number="3">ಆಮೇಲೆ ಕಬ್ಬಿಣದ ಹಂಚನ್ನು ತೆಗೆದುಕೊಂಡು, ಅದನ್ನು ನಿನಗೂ, ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ, ಆ ಪಟ್ಟಣದ ಮೇಲೆ ದೃಷ್ಟಿಯಿಡು, ಅದು ಮುತ್ತಲಾಗುವುದು. ನೀನು ಅದನ್ನು ಮುತ್ತಿದಂತಾಗುವುದು. ಇದು ಇಸ್ರಾಯೇಲಿನ ಜನರಿಗೆ ಒಂದು ಸಂಕೇತ.</verse>
				<verse number="4">“ನೀನು ನಿನ್ನ ಎಡಗಡೆಯಲ್ಲಿ ಮಲಗಿ, ಇಸ್ರಾಯೇಲಿನ ಜನರ ಅಕ್ರಮಗಳನ್ನು ನಿಮ್ಮ ಮೇಲಿಡಬೇಕು. ನೀನು ಎಡಗಡೆಯಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮಗಳನ್ನು ನಿಮ್ಮ ಮೇಲೆ ಹೊತ್ತುಕೊಂಡಿರಬೇಕು.</verse>
				<verse number="5">ನಾನು ದಿವಸಗಳ ಲೆಕ್ಕದ ಪ್ರಕಾರ ಅವರ ಅಕ್ರಮದ ವರ್ಷಗಳನ್ನು ನಿನಗೆ ನೇಮಿಸಿದ್ದೇನೆ. ಅವು ಮುನ್ನೂರ ತೊಂಬತ್ತು ದಿವಸಗಳಾಗಿವೆ. ಹೀಗೆ ನೀನು ಇಸ್ರಾಯೇಲಿನ ಜನರ ಅಕ್ರಮಗಳನ್ನು ಹೊರಬೇಕು.</verse>
				<verse number="6">“ನೀನು ಇವುಗಳನ್ನು ಮಾಡಿದ ಮೇಲೆ ಇನ್ನೊಂದು ಸಾರಿ ಬಲಗಡೆಯಲ್ಲಿ ಮಲಗಿ, ಯೆಹೂದ ಜನರ ಅಕ್ರಮವನ್ನು ನಲವತ್ತು ದಿವಸ ಹೊರಬೇಕು. ನಾನು ನಿನಗೆ ಒಂದೊಂದು ದಿನವನ್ನು ಒಂದೊಂದು ವರ್ಷಕ್ಕೆ ನೇಮಿಸಿದ್ದೇನೆ.</verse>
				<verse number="7">ನೀನು ಯೆರೂಸಲೇಮಿನ ಮುತ್ತಿಗೆಯ ಕಡೆಗೆ ನಿನ್ನ ಮುಖವನ್ನು ಇಡಬೇಕು. ನಿನ್ನ ಭುಜವನ್ನು ನೀನು ಬರಿದುಮಾಡಿಕೊಂಡು, ಅದಕ್ಕೆ ವಿರೋಧವಾಗಿ ಪ್ರವಾದಿಸಬೇಕು.</verse>
				<verse number="8">ನಾನು ನಿನ್ನ ಮೇಲೆ ಹಗ್ಗಗಳನ್ನು ಇಡುತ್ತೇನೆ. ನೀನು ನಿನ್ನ ಮುತ್ತಿಗೆಯ ದಿವಸಗಳು ಮುಗಿಯುವವರೆಗೂ, ಒಂದು ಕಡೆಯಿಂದ ಮತ್ತೊಂದು ಕಡೆಗೆ ಹೊರಳದಂತೆ ನಿನ್ನನ್ನು ಬಂಧಿಸುವೆನು.</verse>
				<verse number="9">“ನೀನು ಗೋಧಿ, ಜವೆಗೋಧಿ, ಅವರೆ, ಅಲಸಂದಿ, ನವಣೆ, ಸಜ್ಜೆಗಳನ್ನು ತೆಗೆದುಕೊಂಡು, ಅವುಗಳನ್ನು ಒಂದು ಮಡಿಕೆಯಲ್ಲಿಟ್ಟು, ನೀನು ಒಂದು ಕಡೆಯಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ನಿನಗಾಗಿ ರೊಟ್ಟಿಯನ್ನು ಮಾಡಿಕೊಂಡು, ಮುನ್ನೂರ ತೊಂಬತ್ತು ದಿನಗಳು ಅವರಿಂದಲೇ ತಿನ್ನಬೇಕು.</verse>
				<verse number="10">ನೀನು ತಿನ್ನುವ ಆಹಾರದ ತೂಕದ ಪ್ರಕಾರ ಅದು ಒಂದು ದಿನಕ್ಕೆ 230 ಗ್ರಾಂ ಇರಲಿ, ನೀನು ಅದನ್ನು ಆಗಾಗ್ಗೆ ತಿನ್ನಬೇಕು.</verse>
				<verse number="11">ನೀನು ನೀರನ್ನು ಸಹ ಅಳತೆಯ ಪ್ರಕಾರ ಸುಮಾರು ಅರ್ಧ ಲೀಟರ್ ಕಾಲಕಾಲಕ್ಕೆ ಸರಿಯಾಗಿ ಕುಡಿಯಬೇಕು.</verse>
				<verse number="12">ಇದಲ್ಲದೆ ನೀನು ಆಹಾರವನ್ನು ಜವೆಗೋಧಿಯ ರೊಟ್ಟಿಗಳಂತೆ ತಿನ್ನಬೇಕು. ಅದನ್ನು ಸೌದೆಗೆ ಬದಲಾಗಿ ಮನುಷ್ಯರ ಮಲವನ್ನು ಉರಿಸಿ ಅವರ ಕಣ್ಣುಗಳ ಮುಂದೆ ಅಡಿಗೆ ಮಾಡಬೇಕು.”</verse>
				<verse number="13">ಯೆಹೋವ ದೇವರು ಹೇಳಿದ್ದೇನೆಂದರೆ, “ಈ ರೀತಿಯಾಗಿ ಇಸ್ರಾಯೇಲಿನ ಜನರು ನಾನು ಅವರನ್ನು ಓಡಿಸುವ ಜನಾಂಗಗಳ ನಡುವೆ ಅಶುದ್ಧ ಆಹಾರವನ್ನು ತಿನ್ನುವರು.”</verse>
				<verse number="14">ಅದಕ್ಕೆ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದ ದಿನದಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ. ಯಾವ ಅಸಹ್ಯ ಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.</verse>
				<verse number="15">ಆಗ ಅವರು ನನಗೆ, “ಇಗೋ, ಮನುಷ್ಯನ ಮಲಕ್ಕೆ ಬದಲಾಗಿ ಹಸುವಿನ ಸಗಣಿಯನ್ನು ಬಳಸಲು ನಿನಗೆ ಅನುಮತಿಸಿದ್ದೇನೆ. ಅದರಿಂದ ನೀನು ರೊಟ್ಟಿಯನ್ನು ತಯಾರಿಸಬಹುದು,” ಎಂದನು.</verse>
				<verse number="16">ಇದಾದ ಮೇಲೆ ಅವರು ನನಗೆ, “ಮನುಷ್ಯಪುತ್ರನೇ, ಇಗೋ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ಮುರಿಯುವೆನು. ಅವರು ತೂಕದ ಪ್ರಕಾರ ಚಿಂತೆಯಿಂದ ರೊಟ್ಟಿಯನ್ನು ತಿನ್ನುವರು. ನೀರನ್ನು ಅಳತೆಯ ಪ್ರಕಾರ ನಿರಾಶೆಯಿಂದ ಕುಡಿಯುವರು.</verse>
				<verse number="17">ಅವರಿಗೆ ರೊಟ್ಟಿ ಮತ್ತು ನೀರಿನ ಕೊರತೆಯಿಂದ ಸ್ತಬ್ಧರಾಗಿ, ಒಬ್ಬರ ಸಂಗಡ ಒಬ್ಬರು ತಮ್ಮ ಪಾಪಗಳಿಗಾಗಿ ಕ್ಷಯಿಸಿ ಹೋಗುವರು.</verse>
			</chapter>
			<chapter number="5">
				<verse number="1">“ಮನುಷ್ಯಪುತ್ರನೇ, ನೀನು ಹರಿತವಾದ ಖಡ್ಗವನ್ನು ತೆಗೆದುಕೊಂಡು ಕ್ಷೌರಿಕನ ಕತ್ತಿಯನ್ನಾಗಿ ಉಪಯೋಗಿಸಿ, ಅದರಿಂದ ನಿನ್ನ ತಲೆಯನ್ನೂ ನಿನ್ನ ಗಡ್ಡವನ್ನೂ ಬೋಳಿಸಿಬಿಟ್ಟು, ಆಮೇಲೆ ಅದನ್ನು ತೂಕ ಮಾಡುವುದಕ್ಕೆ ತಕ್ಕಡಿಯನ್ನು ತೆಗೆದುಕೋ. ಆ ಕೂದಲನ್ನು ಭಾಗ ಮಾಡು.</verse>
				<verse number="2">ಅದರ ಮೂರನೆಯ ಒಂದು ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು. ಮೂರನೆಯ ಒಂದು ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು. ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಖಡ್ಗವನ್ನು ಬೀಸುವೆನು.</verse>
				<verse number="3">ನೀನು ಅವುಗಳೊಳಗಿಂದ ಕೆಲವು ಕೂದಲನ್ನು ಲೆಕ್ಕದಲ್ಲಿ ತೆಗೆದು, ನಿನ್ನ ಸೆರಗುಗಳಲ್ಲಿ ಕಟ್ಟು,” ಎಂದನು.</verse>
				<verse number="4">ಆಮೇಲೆ ಅವುಗಳೊಳಗಿಂದ ಕೆಲವನ್ನು ತೆಗೆದು ಬೆಂಕಿಯ ಮಧ್ಯದಲ್ಲಿ ಹಾಕಿ, ಅವುಗಳನ್ನು ಬೆಂಕಿಯಿಂದ ಸುಡು. ಏಕೆಂದರೆ ಇದರಿಂದ ಆ ಬೆಂಕಿಯು ಸಮಸ್ತ ಇಸ್ರಾಯೇಲಿನ ಮನೆತನದವರಿಗೂ ಹೋಗುವುದು.</verse>
				<verse number="5">“ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ಇದು ಯೆರೂಸಲೇಮು; ನಾನು ಅದನ್ನು ಅದರ ಸುತ್ತಲೂ ಇರುವ ಜನಾಂಗಗಳ ದೇಶಗಳ ನಡುವೆ ಇಟ್ಟಿದ್ದೇನೆ.</verse>
				<verse number="6">ಆಕೆಯು ಜನಾಂಗಗಳಿಗಿಂತ ಹೆಚ್ಚಾಗಿ ನನ್ನ ನ್ಯಾಯಗಳನ್ನೂ, ಅದರ ಸುತ್ತಲಿರುವ ದೇಶಗಳಿಗಿಂತ ಹೆಚ್ಚಾಗಿ ನನ್ನ ನಿಯಮಗಳನ್ನೂ ದುಷ್ಟತನಕ್ಕೆ ತಿರುಗಿಸಿಬಿಟ್ಟಳು. ಅವರು ನನ್ನ ನ್ಯಾಯಗಳನ್ನೂ ಅನುಸರಿಸದೆ ನನ್ನ ನಿಯಮಗಳನ್ನೂ ನಿರಾಕರಿಸಿದ್ದಾರೆ.</verse>
				<verse number="7">“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ನಿಮ್ಮ ಸುತ್ತಲಿರುವ ಜನಾಂಗಗಳಿಗಿಂತ ಅಧಿಕವಾದುದರಿಂದ ನನ್ನ ನಿಯಮಗಳಲ್ಲಿ ನಡೆಯದೇ ಹೋದದ್ದರಿಂದಲೂ, ನನ್ನ ನ್ಯಾಯಗಳನ್ನು ಪಾಲಿಸದೇ ಇದ್ದುದರಿಂದಲೂ, ನಿಮ್ಮ ಸುತ್ತಲಿರುವ ಜನಾಂಗಗಳ ನ್ಯಾಯಗಳ ಪ್ರಕಾರ ಮಾಡಿದ್ದರಿಂದಲೂ,</verse>
				<verse number="8">“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ, ನಿನಗೆ ವಿರೋಧವಾಗಿದ್ದೇನೆ. ಜನಾಂಗಗಳ ಕಣ್ಣುಗಳ ಮುಂದೆ ನಿಮ್ಮ ಜನರನ್ನು ದಂಡಿಸುವೆನು.</verse>
				<verse number="9">ನಾನು ಮಾಡದೆ ಇದ್ದದ್ದನ್ನೂ, ಇನ್ನು ಮೇಲೆ ಮಾಡದೇ ಇರುವಂಥದ್ದನ್ನೂ ನಿಮ್ಮ ಅಸಹ್ಯಗಳ ನಿಮಿತ್ತವಾಗಿ ನಿಮ್ಮಲ್ಲಿ ಮಾಡುತ್ತೇನೆ.</verse>
				<verse number="10">ಆದ್ದರಿಂದ ನಿಮ್ಮ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು. ಮಕ್ಕಳು ಅವರ ತಂದೆಗಳನ್ನು ತಿನ್ನುವರು. ಹೀಗೆ ನಿಮ್ಮಲ್ಲಿ ನ್ಯಾಯತೀರ್ಪನ್ನು ನಡಿಸುವೆನು. ನಿಮ್ಮಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.</verse>
				<verse number="11">ಆದಕಾರಣ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನಿಶ್ಚಯವಾಗಿ ನೀವು ನನ್ನ ಪರಿಶುದ್ಧ ಸ್ಥಳವನ್ನು ನಿಮ್ಮ ಎಲ್ಲಾ ಹೇಸಿಗೆಗಳಿಂದಲೂ, ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ, ನಾನೂ ಸಹ ನಿಮ್ಮನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ.</verse>
				<verse number="12">ನಿನ್ನಲ್ಲಿಯ ಮೂರನೆಯ ಒಂದು ಪಾಲು ಜನರು ವ್ಯಾಧಿಗಳಿಂದ ಸಾಯುವರು, ಕ್ಷಾಮದಿಂದ ನಿಮ್ಮಲ್ಲಿ ಅವರು ನಾಶವಾಗುವರು. ಮೂರನೆಯ ಒಂದು ಪಾಲು ನಿಮ್ಮ ಸುತ್ತಲೂ ಖಡ್ಗ ಹಿಡಿದು ಬೀಳುವರು. ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ ಗಾಳಿಗೆ ತೂರಿ ಚದರಿಸಿ, ಅವರ ಮೇಲೆ ಖಡ್ಗವನ್ನು ಬೀಸುವೆನು.</verse>
				<verse number="13">“ಈ ಪ್ರಕಾರ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ನನ್ನ ರೋಷವನ್ನು ಅವರ ಮೇಲೆ ಕಾರಿ, ಸಮಾಧಾನ ಹೊಂದುವೆನು. ಹೀಗೆ ನಾನು ನನ್ನ ರೋಷವನ್ನು ಅವರ ಮೇಲೆ ತೀರಿಸಿದ ತರುವಾಯ, ಯೆಹೋವ ದೇವರಾದ ನಾನು ರೋಷದಿಂದ ಮಾತನಾಡಿದ್ದೇನೆ ಎಂದು ಅವರು ತಿಳಿಯುವರು.</verse>
				<verse number="14">“ಹಾದು ಹೋಗುವವರೆಲ್ಲರ ಕಣ್ಣೆದುರಿಗೆ ನಾನು ನಿನ್ನನ್ನು ಹಾಳು ಮಾಡಿ, ಸುತ್ತಲಿನ ಜನಾಂಗಗಳ ನಿಂದೆಗೆ ಗುರಿಮಾಡುವೆನು.</verse>
				<verse number="15">ಹೀಗೆ ನಾನು ಕೋಪದಿಂದಲೂ, ರೋಷದಿಂದಲೂ, ಉಗ್ರಖಂಡನೆಯಿಂದಲೂ ನಿಮ್ಮಲ್ಲಿ ನ್ಯಾಯತೀರ್ಪುಗಳನ್ನು ನಡೆಸುವಾಗ, ನಿಮ್ಮ ಸುತ್ತಲಿರುವ ಜನಾಂಗಗಳಿಗೆ ನಿಂದೆಯೂ, ದೂಷಣೆಯೂ, ಶಿಕ್ಷೆಯೂ, ಭಯವೂ ಆಗುವುದು. ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ.</verse>
				<verse number="16">ಆಗ ನಾನು ನಿನ್ನನ್ನು ಹಾಳುಮಾಡಲು ಕ್ಷಾಮವೆಂಬ ವಿನಾಶಕರವಾದ ತೀಕ್ಷ್ಣ ಬಾಣಗಳನ್ನು ನಿನ್ನ ಮೇಲೆ ಬಿಡುವೆನು. ನಿನ್ನ ಮೇಲೆ ಭಯಂಕರವಾದ ಕ್ಷಾಮವನ್ನು ಬರಮಾಡಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.</verse>
				<verse number="17">ನಾನು ಕಳುಹಿಸುವ ಕ್ಷಾಮದಿಂದ ದುಷ್ಟಮೃಗಗಳಿಂದ ನಿನಗೆ ಪುತ್ರ ಶೋಕ ಪ್ರಾಪ್ತಿಯಾಗುವುದು. ವ್ಯಾಧಿಯೂ, ರಕ್ತಪ್ರವಾಹವೂ ನಿನ್ನನ್ನು ಪೀಡಿಸುವುದು, ನಿನ್ನನ್ನು ಖಡ್ಗಕ್ಕೆ ತುತ್ತು ಮಾಡುವೆನು. ಇದು ಯೆಹೋವ ದೇವರಾದ ನನ್ನ ನುಡಿ.”</verse>
			</chapter>
			<chapter number="6">
				<verse number="1">ಯೆಹೋವ ದೇವರು ಈ ವಾಕ್ಯವು ನನಗೆ ಬಂದಿತು:</verse>
				<verse number="2">“ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಪರ್ವತಗಳಿಗೆ ಅಭಿಮುಖನಾಗಿ ನಿಂತು, ಅವುಗಳಿಗೆ ವಿರೋಧವಾಗಿ ಹೀಗೆ ಪ್ರವಾದಿಸು,</verse>
				<verse number="3">‘ಇಸ್ರಾಯೇಲಿನ ಪರ್ವತಗಳೇ, ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಹೌದು, ಸಾರ್ವಭೌಮ ಯೆಹೋವ ದೇವರು ಪರ್ವತಗಳಿಗೂ ಗುಡ್ಡಗಳಿಗೂ ನದಿಗಳಿಗೂ ಕಣಿವೆಗಳಿಗೂ ಹೀಗೆ ಹೇಳುತ್ತಾರೆ, ನಾನೇ ನಿಮ್ಮ ಮೇಲೆ ಖಡ್ಗವನ್ನು ಹಿಡಿದು, ನಿಮ್ಮ ಪೂಜಾಸ್ಥಳಗಳನ್ನು ನಾಶಮಾಡುತ್ತೇನೆ.</verse>
				<verse number="4">ನಿಮ್ಮ ಯಜ್ಞವೇದಿಗಳು ಹಾಳಾಗುವುವು. ನಿಮ್ಮ ಧೂಪವೇದಿಗಳು ಚೂರುಚೂರಾಗುವುವು. ನಿಮ್ಮ ಜನರು ನಿಮ್ಮ ವಿಗ್ರಹಗಳ ಮುಂದೆ ಹತರಾಗಿ ಬೀಳುವಂತೆ ಮಾಡುವೆನು.</verse>
				<verse number="5">ಇಸ್ರಾಯೇಲರ ಹೆಣಗಳನ್ನು ದೇವತಾ ವಿಗ್ರಹಗಳ ಮುಂದೆ ಹಾಕುವೆನು. ನಿಮ್ಮ ಬಲಿಪೀಠಗಳ ಸುತ್ತಲೂ ನಿಮ್ಮ ಎಲುಬುಗಳನ್ನು ಎರಚಿ ಬಿಡುವೆನು.</verse>
				<verse number="6">ನೀವು ವಾಸಮಾಡುವ ನಿಮ್ಮ ಎಲ್ಲಾ ಸ್ಥಳಗಳು ಹಾಳಾಗುವುವು. ಪೂಜಾ ಸ್ಥಳಗಳೂ ನಾಶವಾಗುವುವು. ಹೀಗೆ ನಿಮ್ಮ ಬಲಿಪೀಠಗಳು ಸಹ ನಾಶವಾಗಿ, ನಿಮ್ಮ ವಿಗ್ರಹಗಳು ಒಡೆದುಹೋಗಿ ಇಲ್ಲದಂತಾಗುವುವು. ನೀವು ರೂಪಿಸಿದ ಎಲ್ಲವೂ ಕಡಿದು ಬಿದ್ದು ಅಳಿದುಹೋಗುವುವು.</verse>
				<verse number="7">ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು. ಆಗ ನೀವು ನಾನೇ ಯೆಹೋವ ದೇವರೆಂದು ತಿಳಿಯುವಿರಿ.</verse>
				<verse number="8">“ ‘ಆದರೆ ನಾನು ಕೆಲವರನ್ನು ಉಳಿಸುತ್ತೇನೆ; ಹೇಗೆಂದರೆ, ನೀವು ದೇಶಗಳ ಮತ್ತು ಜನಾಂಗಗಳ ನಡುವೆ ಚದರಿಹೋದಾಗ ನಿಮ್ಮಲ್ಲಿ ಕೆಲವರು ಖಡ್ಗದಿಂದ ತಪ್ಪಿಸಿಕೊಳ್ಳುವಿರಿ.</verse>
				<verse number="9">ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.</verse>
				<verse number="10">ನಾನೇ ಯೆಹೋವ ದೇವರೆಂದೂ, ನಾನು ಈ ಕೇಡನ್ನು ಮಾಡುತ್ತಿರುವೆನೆಂದೂ, ನಾನು ವ್ಯರ್ಥವಾಗಿ ಹೇಳುವುದಿಲ್ಲವೆಂದೂ ತಿಳಿದುಕೊಳ್ಳುವರು.</verse>
				<verse number="11">“ ‘ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನೀನು ಚಪ್ಪಾಳೆ ಹೊಡೆದು ನೆಲವನ್ನೊದ್ದು ಹೀಗೆ ಹೇಳು, “ಆಹಾ!” ಇಸ್ರಾಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.</verse>
				<verse number="12">ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು. ಹತ್ತಿರದಲ್ಲಿರುವವನು ಖಡ್ಗದಿಂದ ಬೀಳುವನು. ಉಳಿದ ಮುತ್ತಿಗೆಯಲ್ಲಿರುವವನು ಕ್ಷಾಮದಿಂದ ಸಾಯುವನು. ಹೀಗೆ ನಾನು ಅವರ ಮೇಲೆ ನನ್ನ ರೋಷವನ್ನು ತೀರಿಸಿಕೊಳ್ಳುವೆನು.</verse>
				<verse number="13">ಆಮೇಲೆ ಅವರಲ್ಲಿ ಹತರಾದವರು, ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಬಲಿಪೀಠಗಳ ಸುತ್ತಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ, ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸಿರಾದ ಮರದ ಕೆಳಗೂ, ಪ್ರತಿಯೊಂದು ದಪ್ಪವಾದ ಏಲಾ ಮರದ ಕೆಳಗಡೆಯೂ, ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವುದರಲ್ಲಿಯೂ ನಾನೇ ಯೆಹೋವ ದೇವರೆಂದು ತಿಳಿಯುವಿರಿ.</verse>
				<verse number="14">ನಾನು ಅವರ ವಿರುದ್ಧ ಕೈಯೆತ್ತಿ, ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು, ನಾನೇ ಯೆಹೋವ ದೇವರು, ಎಂದು ಅವರಿಗೆ ತಿಳಿಯುವುದು.’ ”</verse>
			</chapter>
			<chapter number="7">
				<verse number="1">ಯೆಹೋವ ದೇವರ ವಾಕ್ಯವು ನನಗೆ ಬಂದಿತು:</verse>
				<verse number="2">“ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಇಸ್ರಾಯೇಲ್ ದೇಶಕ್ಕೆ ಹೀಗೆ ಹೇಳುತ್ತಾರೆ: “ ‘ಅಂತ್ಯವು ಬಂದಿದೆ! ಈ ದೇಶದ ನಾಲ್ಕು ಮೂಲೆಗಳಲ್ಲಿಯೂ ಅಂತ್ಯವು ಬಂದಿದೆ!</verse>
				<verse number="3">ಈಗಲೇ ನಿನಗೆ ಅಂತ್ಯವು ಬಂದಿದೆ. ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡುತ್ತೇನೆ. ನಿನ್ನ ನಡತೆಯ ಪ್ರಕಾರ ನಿನಗೆ ನ್ಯಾಯತೀರಿಸುತ್ತೇನೆ. ನಿನ್ನ ಎಲ್ಲಾ ಅಸಹ್ಯ ಕಾರ್ಯಗಳಿಗೋಸ್ಕರ ನಿನ್ನ ಮೇಲೆ ಮುಯ್ಯಿತೀರಿಸುವೆನು.</verse>
				<verse number="4">ನನ್ನ ಕಣ್ಣುಗಳು ನಿನ್ನನ್ನು ಕನಿಕರಿಸುವುದೂ ಇಲ್ಲ. ನಾನು ನಿನ್ನನ್ನು ಬಿಡುವುದೂ ಇಲ್ಲ. ಆದರೆ ನಿನ್ನ ದುರ್ಮಾರ್ಗಗಳ ಪ್ರಕಾರ, ನಿನ್ನ ಮೇಲೆ ಮುಯ್ಯಿ ತೀರಿಸುತ್ತೇನೆ. ನಿನ್ನ ಅಸಹ್ಯ ಕಾರ್ಯಗಳು ನಿನ್ನ ಮಧ್ಯೆ ಇರುವುವು. ಆಗ ನಾನೇ ಯೆಹೋವ ದೇವರು ಎಂದು ನಿಮಗೆ ತಿಳಿಯುವುದು.’</verse>
				<verse number="5">“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಕೇಡು! ಎಂದೂ ಕೇಳದ ಕೇಡು, ಇಗೋ ಬಂದಿತು.</verse>
				<verse number="6">ಅಂತ್ಯವು ಬಂದಿತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ ಬಂದೇ ಬಂತು.</verse>
				<verse number="7">ಓ ದೇಶ ನಿವಾಸಿಯೇ, ನಿನಗಾಗಿ ವಿನಾಶದ ದಿನ ಬಂದಿತು, ಕಾಲವು ಬಂತು, ತೊಂದರೆಯ ದಿನವು ಹತ್ತಿರವಾಯಿತು. ಪರ್ವತಗಳ ಮೇಲೆ ಸಂತೋಷವಲ್ಲ ಭೀತಿಯಿದೆ.</verse>
				<verse number="8">ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ರೋಷವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿ ಬಿಡುವೆನು. ನಾನು ನಿನ್ನ ನಡತೆಯ ಪ್ರಕಾರ ಮುಯ್ಯಿತೀರಿಸುವೆನು. ನಿನ್ನ ಎಲ್ಲಾ ಅಸಹ್ಯಕಾರ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿತೀರಿಸುವೆನು.</verse>
				<verse number="9">ನಾನು ಕಟಾಕ್ಷಿಸುವುದೂ ಇಲ್ಲ, ನಿನ್ನನ್ನು ಕನಿಕರಿಸುವುದೂ ಇಲ್ಲ. ನಿನ್ನ ನಡತೆಗಳಿಗೂ, ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕ ಹಾಗೆ ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ನಾನೇ ಹೊಡೆಯುತ್ತಿರುವ ಯೆಹೋವ ದೇವರೆಂದು ನಿಮಗೆ ತಿಳಿಯುವುದು.</verse>
				<verse number="10">“ ‘ಇಗೋ ಆ ದಿನವು ಬಂತು, ನೋಡು ವಿನಾಶದ ದಿನ ಹೊರಟುಹೋಯಿತು, ಕೋಲು ಚಿಗುರಿತು, ಅಹಂಕಾರವು ಅರಳಿತು,</verse>
				<verse number="11">ಬಲಾತ್ಕಾರವು ದುಷ್ಟತನದ ಕೋಲಿನಲ್ಲಿ ಬೆಳೆದಿತ್ತು. ಅವರಲ್ಲಿಯೂ ಅವರ ಜನಸಮೂಹದಲ್ಲಿಯೂ, ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವುದಿಲ್ಲ, ಅವರಲ್ಲಿ ಯಾವ ಮೌಲ್ಯವು ಇರುವುದಿಲ್ಲ.</verse>
				<verse number="12">ಸಮಯವು ಬಂತು, ದಿನವು ಬಂದೇಬಿಟ್ಟಿತು. ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲದಿರಲಿ, ಮಾರುವವನು ದುಃಖಿಸದಿರಲಿ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ರೌದ್ರವಿದೆ.</verse>
				<verse number="13">ಮಾರಿದವನು ಎಷ್ಟು ವರ್ಷ ಬದುಕಿದರೂ, ಮಾರಿದ ಸೊತ್ತು ಅವನ ವಶಕ್ಕೆ ತಿರುಗಿ ಬಾರದು. ಉಂಟಾದ ದಿವ್ಯದರ್ಶನ ಸಮಾಜದವರಿಗೆಲ್ಲಾ ಸಂಬಂಧಿಸಿದೆ, ಎಂದಿಗೂ ತಿರುಗದು, ಯಾರೂ ತಮ್ಮ ಪಾಪಗಳಿಂದ ತಮ್ಮ ಜೀವವನ್ನು ಉಳಿಸಿಕೊಳ್ಳರು.</verse>
				<verse number="14">“ ‘ಅವರು ಕಹಳೆಯನ್ನೂದಿ ಎಲ್ಲವನ್ನೂ ಸಿದ್ಧ ಮಾಡಿಕೊಂಡಿದ್ದಾರೆ. ಆದರೆ ಯಾರೂ ಯುದ್ಧಕ್ಕೆ ಹೋಗುವುದಿಲ್ಲ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ಕೋಪವಿದೆ.</verse>
				<verse number="15">ಹೊರಗೆ ಖಡ್ಗವೂ ಒಳಗೆ ವ್ಯಾಧಿಯೂ ಕ್ಷಾಮವೂ ಉಂಟು. ಹೊರಗಿರುವವರನ್ನು ಖಡ್ಗವು ಸಾಯಿಸುವುದು, ಪಟ್ಟಣದಲ್ಲಿರುವವರನ್ನು ವ್ಯಾಧಿಯೂ ಕ್ಷಾಮವೂ ತಿಂದುಬಿಡುವುದು.</verse>
				<verse number="16">ಆದರೆ ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಳ್ಳುವರು. ಪ್ರತಿಯೊಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಗೋಳಾಡಿ, ಪರ್ವತಗಳ ಮೇಲೆ ಇರುವರು.</verse>
				<verse number="17">ಕೈಗಳೆಲ್ಲಾ ಜೋತಾಡುವುವು, ಎಲ್ಲಾ ಮೊಣಕಾಲುಗಳು ನೀರಿನ ಹಾಗೆ ಆಗುವುವು.</verse>
				<verse number="18">ಅವರು ತಮ್ಮಲ್ಲಿ ಗೋಣಿತಟ್ಟುಗಳನ್ನು ಕಟ್ಟಿಕೊಳ್ಳುವರು ಮತ್ತು ಭಯವು ಅವರನ್ನು ಮುಚ್ಚಿಬಿಡುವುದು. ಎಲ್ಲಾ ಮುಖಗಳ ಮೇಲೆ ನಾಚಿಕೆಯೂ, ಅವರ ಎಲ್ಲಾ ತಲೆಗಳು ಬೋಳಾಗಿಯೂ ಇರುವುವು.</verse>
				<verse number="19">“ ‘ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ವಸ್ತುವಿನಂತಿರುವುದು. ಅವರ ಬೆಳ್ಳಿ ಬಂಗಾರಗಳು ಯೆಹೋವ ದೇವರ ಕೋಪದ ದಿವಸದಲ್ಲಿ ಅವರನ್ನು ಪಾರು ಮಾಡಲಾರವು. ಇದರಿಂದ ಅವರ ಹಸಿವು ನೀಗುವುದಿಲ್ಲ, ಅವರ ಹೊಟ್ಟೆಗಳನ್ನು ತುಂಬಿಸುವುದಿಲ್ಲ. ಏಕೆಂದರೆ ಅವರ ಆಸ್ತಿಯು ಪಾಪ ಕೃತ್ಯಗಳಿಗೆ ಕಾರಣವಾಗಿತ್ತು.</verse>
				<verse number="20">ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು. ಆದಕಾರಣ ಅದನ್ನು ಅವರಿಗೆ ಅಶುದ್ಧಪದಾರ್ಥವನ್ನಾಗಿ ಮಾಡಿ</verse>
				<verse number="21">ನಾನು ಅದನ್ನು ವಿದೇಶಿಯರ ಕೈಗೆ ಕೊಳ್ಳೆಯಾಗಿಯೂ, ಭೂಮಿಯ ದುಷ್ಟರಿಗೆ ಸೂರೆಯಾಗಿಯೂ ಒಪ್ಪಿಸುವೆನು. ಅವರು ಅದನ್ನು ಅಪವಿತ್ರಪಡಿಸುವರು.</verse>
				<verse number="22">ನನ್ನ ಮುಖವನ್ನು ನಾನು ಅವರ ಕಡೆಯಿಂದ ತಿರುಗಿಸುವೆನು. ನನ್ನ ಅತ್ಯಂತ ಅಮೂಲ್ಯ ಸ್ಥಳವನ್ನು ಅಪವಿತ್ರಪಡಿಸುವರು. ದರೋಡೆಕೋರರು ಅದರಲ್ಲಿ ಸೇರಿ ಅದನ್ನು ಅಪವಿತ್ರಪಡಿಸುವರು.</verse>
				<verse number="23">“ ‘ಸರಪಳಿಯನ್ನು ತಯಾರುಮಾಡು. ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ.</verse>
				<verse number="24">ಆದಕಾರಣ ನಾನು ಇತರ ಜನಾಂಗಗಳಲ್ಲಿ ಕೆಟ್ಟವರನ್ನು ತರುತ್ತೇನೆ ಮತ್ತು ಅವರು ಅವರ ಮನೆಗಳನ್ನು ವಶಪಡಿಸಿಕೊಳ್ಳುವರು. ನಾನು ಬಲಿಷ್ಠರ ಅಹಂಕಾರವನ್ನು ನಿಲ್ಲಿಸುತ್ತೇನೆ. ಅವರ ಪರಿಶುದ್ಧ ಸ್ಥಳಗಳು ಅಪವಿತ್ರವಾಗುವುವು.</verse>
				<verse number="25">ನಾಶವು ಬರುತ್ತದೆ. ಅವರು ಸಮಾಧಾನವನ್ನು ಹುಡುಕುತ್ತಾರೆ, ಆದರೆ ಅದು ಇರುವುದಿಲ್ಲ.</verse>
				<verse number="26">ಕೇಡಿನ ಮೇಲೆ ಕೇಡು ಬರುವುದು, ಸುದ್ದಿಯ ಮೇಲೆ ಸುದ್ದಿ ಬರುವುದು, ಅವರು ಪ್ರವಾದಿಯಿಂದ ದರ್ಶನವನ್ನು ಹುಡುಕುವರು. ಆದರೆ ಯಾಜಕರಿಂದ ನಿಯಮ ಬೋಧನೆಯು ಅಡಗಿಹೋಗುವುದು, ಹಿರಿಯರಿಂದ ಸಮಾಲೋಚನೆಯು ಇಲ್ಲವಾಗುವುದು.</verse>
				<verse number="27">ಅರಸನು ದುಃಖಿಸುವನು, ರಾಜಕುಮಾರನಿಗೆ ನಿರಾಶೆಯು ಅವನ ಉಡುಪಾಗಿರುತ್ತದೆ. ದೇಶದ ಜನರ ಕೈಗಳು ತತ್ತರಿಸುವುವು, ಅವರ ದುರ್ನಡತೆಗೆ ತಕ್ಕ ಪ್ರತೀಕಾರ ಮಾಡುವೆನು. ಅವರ ದುಷ್ಕರ್ಮಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. “ ‘ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”</verse>
			</chapter>
			<chapter number="8">
				<verse number="1">ಆರನೆಯ ವರ್ಷದ ಆರನೆಯ ತಿಂಗಳಿನ, ಐದನೆಯ ದಿನದಲ್ಲಿ ನಾನೂ, ಯೆಹೂದದ ಹಿರಿಯರೂ ನನ್ನ ಮನೆಯಲ್ಲಿ ಕುಳಿತುಕೊಂಡಿರುವಾಗ, ಅಲ್ಲಿ ಸಾರ್ವಭೌಮ ಯೆಹೋವ ದೇವರ ಹಸ್ತ ನನ್ನ ಮೇಲೆ ಸ್ಪರ್ಶವಾಯಿತು.</verse>
				<verse number="2">ಇಗೋ, ನಾನು ನೋಡುತ್ತಿದ್ದಂತೆ ಬೆಂಕಿ ಉರಿಯುತ್ತದೋ ಎಂಬಂತೆ ಮನುಷ್ಯಾಕೃತಿಯೊಂದು ಕಾಣಿಸಿತು. ಸೊಂಟದ ಕೆಳಗಿನ ರೂಪವು ಬೆಂಕಿಯಂತಿತ್ತು ಮತ್ತು ಅವನ ಸೊಂಟದ ಮೇಲಿನ ಭಾಗವು ಹೊಳೆಯುವ ಲೋಹದಂತೆ ಪ್ರಕಾಶಮಾನವಾಗಿತ್ತು.</verse>
				<verse number="3">ಕೈಯ ಹಾಗಿರುವ ಹಸ್ತವನ್ನು ಚಾಚಿ, ನನ್ನ ತಲೆಯ ಕೂದಲಿನಿಂದ ನನ್ನನ್ನು ಹಿಡಿದನು. ಆಗ ದೇವರಾತ್ಮರು ದೇವದರ್ಶನದಲ್ಲಿ ಯೆರೂಸಲೇಮಿನ ಉತ್ತರದ ಕಡೆಗೆ ಎದುರಾಗಿರುವ ಒಳ ಅಂಗಳದ ಕಡೆಗೆ, ರೋಷಗೊಳಿಸುವ ವಿಗ್ರಹವು ಇದ್ದಲ್ಲಿಗೆ ನನ್ನನ್ನು ಎತ್ತಿಕೊಂಡು ಹೋದರು.</verse>
				<verse number="4">ಇಸ್ರಾಯೇಲಿನ ದೇವರ ಮಹಿಮೆಯು, ನಾನು ಆ ಬಯಲುಸೀಮೆಯಲ್ಲಿ ನೋಡಿದ ಆಕಾರದ ಪ್ರಕಾರವೇ ಅಲ್ಲಿ ಇತ್ತು.</verse>
				<verse number="5">ಆಗ ಅವರು ನನಗೆ, “ಮನುಷ್ಯಪುತ್ರನೇ, ಉತ್ತರಕ್ಕೆ ಕಣ್ಣೆತ್ತಿ ನೋಡು,” ಎಂದು ಹೇಳಿದರು; ಅಂತೆಯೇ ನಾನು ಉತ್ತರಕ್ಕೆ ಕಣ್ಣೆತ್ತಿ ನೋಡಿದೆ. ಇಗೋ ದೇವರನ್ನು ರೋಷಗೊಳಿಸುವ ಅದೇ ವಿಗ್ರಹವು ಬಲಿಪೀಠದ ಬಾಗಿಲ ಉತ್ತರದ ಪ್ರವೇಶದ್ವಾರದ ಮುಂದೆ ನಿಂತಿತ್ತು.</verse>
				<verse number="6">ಅವರು ನನಗೆ, “ಮನುಷ್ಯಪುತ್ರನೇ, ಅವರು ಮಾಡುತ್ತಿರುವುದನ್ನು ನೋಡುತ್ತಿರುವೆಯಾ? ನಾನು ನನ್ನ ಪರಿಶುದ್ಧ ಸ್ಥಳವನ್ನು ಬಿಟ್ಟು ದೂರ ಹೋಗುವಹಾಗೆ, ಇಸ್ರಾಯೇಲಿನ ಮನೆತನದವರು ಇಲ್ಲಿ ನಡೆಸುತ್ತಿರುವ ದೊಡ್ಡ ಅಸಹ್ಯಗಳನ್ನು ನೋಡುತ್ತಿರುವೆಯಾ? ಆದರೆ ನೀನು ಇನ್ನೂ ಹೆಚ್ಚಿನ ಅಸಹ್ಯಗಳನ್ನು ನೋಡುವೆ,” ಎಂದನು.</verse>
				<verse number="7">ಆಗ ಅವನು ನನ್ನನ್ನು ಅಂಗಳದ ಬಾಗಿಲಿಗೆ ತಂದನು ಮತ್ತು ನಾನು ನೋಡುವಾಗ, ಗೋಡೆಯಲ್ಲಿ ಒಂದು ರಂಧ್ರವನ್ನು ಕಂಡೆನು.</verse>
				<verse number="8">ಆಮೇಲೆ ಆತನು ನನಗೆ, “ಮನುಷ್ಯಪುತ್ರನೇ, ಈಗ ಗೋಡೆಯಲ್ಲಿ ಕೊರೆ,” ಎಂದು ಹೇಳಿದನು. ನಾನು ಗೋಡೆಯನ್ನು ಕೊರೆದಾಗ ಒಂದು ಬಾಗಿಲನ್ನು ಕಂಡೆನು.</verse>
				<verse number="9">ಆಗ ಆತನು ನನಗೆ, “ನೀನು ಒಳಗೆ ಹೋಗಿ ಜನರು ಇಲ್ಲಿ ನಡೆಸುವ ಅಸಹ್ಯ ದುಷ್ಕಾರ್ಯಗಳನ್ನು ನೋಡು,” ಎಂದನು. ನಾನು ಒಳಗೆ ಹೋಗಿ ನೋಡಿದೆನು.</verse>
				<verse number="10">ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ, ಅಸಹ್ಯ ಮೃಗಗಳೂ, ಇಸ್ರಾಯೇಲರು ಪೂಜಿಸುವ ಸಕಲ ಮೂರ್ತಿಗಳೂ ಆ ಗೋಡೆಯ ಸುತ್ತಲೂ ಚಿತ್ರಿತವಾಗಿದ್ದವು.</verse>
				<verse number="11">ಇಸ್ರಾಯೇಲಿನ ಮನೆತನದವರಲ್ಲಿ ಎಪ್ಪತ್ತು ಮಂದಿ ಹಿರಿಯರೂ, ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿದ್ದರು. ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾರತಿ ಇತ್ತು. ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.</verse>
				<verse number="12">ಆಗ ದೇವರು ನನಗೆ, “ಮನುಷ್ಯಪುತ್ರನೇ, ಇಸ್ರಾಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಯೆಹೋವ ದೇವರು ನಾಡನ್ನು ತೊರೆದುಬಿಟ್ಟಿದ್ದಾರೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು.</verse>
				<verse number="13">ಇದಲ್ಲದೆ ಅವರು, “ಮತ್ತೊಂದು ಸಾರಿ ತಿರುಗಿಕೋ. ಅವರು ಮಾಡುವ ಇನ್ನೂ ಮಹಾ ಅಸಹ್ಯ ಕಾರ್ಯಗಳನ್ನು ನೋಡುವೆ,” ಎಂದರು.</verse>
				<verse number="14">ಆಗ ಅವನು ನನ್ನನ್ನು ಯೆಹೋವ ದೇವರ ಆಲಯದ ಉತ್ತರದ ಕಡೆಗೆ ಎದುರಾಗಿದ್ದ ಬಾಗಿಲಿನ ಕಡೆಗೆ ತಂದನು. ಅಲ್ಲಿ ತಮ್ಮೂಜ್ ದೇವತೆಗೋಸ್ಕರ ಅಳುವ ಹೆಂಗಸರು ಕೂತಿದ್ದರು.</verse>
				<verse number="15">ಆಮೇಲೆ ಅವನು ನನಗೆ, “ಮನುಷ್ಯಪುತ್ರನೇ, ನೋಡಿದೆಯಾ? ಮತ್ತೊಂದು ಸಾರಿ ತಿರುಗಿಕೋ. ಇವುಗಳಿಂದ ಇನ್ನೂ ಅಸಹ್ಯವಾದವುಗಳನ್ನು ಕಾಣುವೆ,” ಎಂದು ಹೇಳಿದನು.</verse>
				<verse number="16">ಆಗ ಅವನು ನನ್ನನ್ನು ಯೆಹೋವ ದೇವರ ಆಲಯದ ಒಳಗಿನ ಅಂಗಳಕ್ಕೆ ಕರೆದುಕೊಂಡು ಬಂದನು. ಇಗೋ, ಯೆಹೋವ ದೇವರ ಮಂದಿರದ ಬಾಗಿಲಲ್ಲಿ ದ್ವಾರಾಂಗಳಕ್ಕೂ, ಬಲಿಪೀಠಕ್ಕೂ ಮಧ್ಯದಲ್ಲಿ ಸುಮಾರು ಇಪ್ಪತ್ತೈದು ಮಂದಿಯು ಯೆಹೋವ ದೇವರ ಮಂದಿರಕ್ಕೆ ಬೆನ್ನುಹಾಕಿ, ಪೂರ್ವದಿಕ್ಕಿನ ಕಡೆಗೆ ತಮ್ಮ ಮುಖಗಳನ್ನಿಟ್ಟು, ಸೂರ್ಯನಮಸ್ಕಾರ ಮಾಡುತ್ತಿದ್ದರು.</verse>
				<verse number="17">ಆಗ ಅವರು ನನಗೆ, “ಮನುಷ್ಯಪುತ್ರನೇ, ನೋಡಿದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದ ಮನೆತನದವರಿಗಲ್ಲವೇ? ಏಕೆಂದರೆ ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ, ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರಲ್ಲವೇ? ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟುಕೊಳ್ಳುತ್ತಾರೆ.</verse>
				<verse number="18">ಆದ್ದರಿಂದ ನಾನು ಸಹ ರೋಷದಿಂದಲೇ ಇರುವೆನು. ನಾನು ಅವರನ್ನು ಕನಿಕರಿಸುವುದೂ ಇಲ್ಲ, ನಾನು ಅವರನ್ನು ಉಳಿಸುವುದೂ ಇಲ್ಲ. ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರುಚಿದರೂ, ನಾನು ಅವರನ್ನು ಕೇಳಿಸಿಕೊಳ್ಳುವುದೂ ಇಲ್ಲ,” ಎಂದನು.</verse>
			</chapter>
			<chapter number="9">
				<verse number="1">ಆಗ ಅವರು ದೊಡ್ಡ ಧ್ವನಿಯಿಂದ, “ನಗರದ ಜನರಿಗೆ ನ್ಯಾಯತೀರಿಸಲು ನೇಮಕವಾಗಿರುವವರೇ, ನಿಮ್ಮ ಆಯುಧಗಳನ್ನು ಹಿಡಿದವರಾಗಿ ಸಮೀಪಿಸಿರಿ,” ಎಂದು ಹೇಳುವುದನ್ನು ನಾನು ಕೇಳಿದೆನು.</verse>
				<verse number="2">ಕೂಡಲೇ ಗದೆಗಳನ್ನು ಹಿಡಿದುಕೊಂಡ ಆರು ಮಂದಿ ಪುರುಷರು ಉತ್ತರಾಭಿಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು. ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ಮಸಿಕುಡಿಕೆಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ಕಂಚಿನ ಬಲಿಪೀಠದ ಪಕ್ಕದಲ್ಲಿ ನಿಂತುಕೊಂಡರು.</verse>
				<verse number="3">ಇಷ್ಟರಲ್ಲಿ ಇಸ್ರಾಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ, ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು. ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನನ್ನು ಯೆಹೋವ ದೇವರು ಕೂಗಿ ಅವನಿಗೆ,</verse>
				<verse number="4">“ಯೆರೂಸಲೇಮಿನ ಪಟ್ಟಣದ ಮಧ್ಯೆ ಹಾದು ಹೋಗಿ, ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು,” ಎಂದರು.</verse>
				<verse number="5">ಮಿಕ್ಕವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ಸಂಚರಿಸುತ್ತಾ ಹತಿಸಿರಿ, ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ,</verse>
				<verse number="6">ವೃದ್ಧ, ಯುವಕ, ಯುವತಿಯರನ್ನು ಮತ್ತು ಎಳೆಗೂಸುಗಳನ್ನು ಮತ್ತು ಹೆಂಗಸರನ್ನು ಕೊಂದುಹಾಕಿರಿ. ಆದರೆ ಗುರುತು ಯಾವನ ಮೇಲೆ ಇದೆಯೋ, ಅವನನ್ನು ಮುಟ್ಟಬೇಡಿರಿ. ನನ್ನ ಪರಿಶುದ್ಧ ಸ್ಥಳದಿಂದಲೇ ಪ್ರಾರಂಭಿಸಿರಿ” ಎಂದಾಗ, ಅವರು ಆಲಯದ ಮುಂದೆ ಇದ್ದ ಹಿರಿಯರಿಂದ ಪ್ರಾರಂಭಿಸಿದರು.</verse>
				<verse number="7">ದೇವರು ಅವರಿಗೆ, “ಆಲಯವನ್ನು ಅಶುದ್ಧ ಮಾಡಿರಿ, ಹತರಾದವರಿಂದ ಅಂಗಳಗಳನ್ನು ತುಂಬಿರಿ, ಹೊರಡಿರಿ,” ಎಂದು ಹೇಳಿದರು. ಆಗ ಅವರು ಹೊರಟು ನಗರದಲ್ಲಿದ್ದವರನ್ನು ಕೊಂದರು.</verse>
				<verse number="8">ಅವರು ಹೊಡೆಯುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನೀವು ಯೆರೂಸಲೇಮಿನ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದು, ಇಸ್ರಾಯೇಲರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿರಾ?” ಎಂದೆನು.</verse>
				<verse number="9">ಆಗ ಅವರು ನನಗೆ, “ಇಸ್ರಾಯೇಲಿನ ಮತ್ತು ಯೆಹೂದ ಮನೆತನದವರ ಅಕ್ರಮವು ಅತಿ ದೊಡ್ಡದಾಗಿದೆ. ದೇಶವು ರಕ್ತದಿಂದ ತುಂಬಿದೆ, ಪಟ್ಟಣವು ಅಧರ್ಮದಿಂದ ತುಂಬಿದೆ. ‘ಯೆಹೋವ ದೇವರು ದೇಶವನ್ನು ತೊರೆದುಬಿಟ್ಟಿದ್ದಾರೆ, ಯೆಹೋವ ದೇವರು ನೋಡುವುದಿಲ್ಲ,’ ಎಂದು ಅವರು ಹೇಳುತ್ತಾರೆ.</verse>
				<verse number="10">ನಾವಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.</verse>
				<verse number="11">ನಾರುಮಡಿಯನ್ನು ಧರಿಸಿಕೊಂಡು ದೌತಿಯನ್ನು ತನ್ನ ನಡುವಿಗೆ ಕಟ್ಟಿಕೊಂಡಂಥ ಆ ಮನುಷ್ಯನು, “ವರ್ತಮಾನವನ್ನು ತಂದು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ,” ಎಂದನು.</verse>
			</chapter>
			<chapter number="10">
				<verse number="1">ಆಗ ನಾನು ನೋಡಲಾಗಿ, ಕೆರೂಬಿಗಳ ತಲೆಯ ಮೇಲಿದ್ದ ಆಕಾಶಮಂಡಲದಲ್ಲಿ ನೀಲಮಣಿಯಂತೆ ಸಿಂಹಾಸನದ ಆಕಾರದಂತಿರುವ ರೂಪವನ್ನು ಕಂಡೆನು. ಅದು ಅವುಗಳ ಮೇಲೆ ಕಾಣಿಸಿತು.</verse>
				<verse number="2">ಯೆಹೋವ ದೇವರು ನಾರುಮಡಿಯನ್ನು ಧರಿಸಿಕೊಂಡಿದ್ದ ಮನುಷ್ಯನಿಗೆ, “ನೀನು ಕೆರೂಬಿಗಳ ಕೆಳಗೆ ಇರುವ ಸುಡುವ ಕಲ್ಲಿದ್ದಲನ್ನು ನಿನ್ನ ಕೈತುಂಬ ತೆಗೆದುಕೊಂಡು ಅದನ್ನು ಪಟ್ಟಣದ ಮೇಲೆ ಎರಚು,” ಎಂದರು. ಹಾಗೆಯೇ ನಾನು ನೋಡುತ್ತಿದ್ದಂತೆಯೇ ಅವನು ಒಳಗೆ ಪ್ರವೇಶಿಸಿದನು.</verse>
				<verse number="3">ಆ ಮನುಷ್ಯನು ಒಳಗೆ ಹೋದಾಗ ಕೆರೂಬಿಗಳು ಆಲಯದ ದಕ್ಷಿಣ ಭಾಗದ ಬಳಿಯಲ್ಲಿ ನಿಂತಿದ್ದರು. ಮೇಘವು ಒಳಗಿನ ಅಂಗಳವನ್ನು ತುಂಬಿಸಿಕೊಂಡಿತ್ತು.</verse>
				<verse number="4">ಆಗ ಯೆಹೋವ ದೇವರ ಮಹಿಮೆಯು ಕೆರೂಬಿಗಳ ಮೇಲಿನಿಂದ ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಿಗೆ ಹೋಯಿತು. ಆಲಯವು ಮೇಘದಿಂದ ತುಂಬಿತ್ತು. ಆಗ ಯೆಹೋವ ದೇವರ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.</verse>
				<verse number="5">ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತ ದೇವರು ಮಾತನಾಡುವ ಹಾಗೆ ಹೊರಗಣ ಅಂಗಳದವರೆಗೂ ಕೇಳಿಬಂತು.</verse>
				<verse number="6">ಯೆಹೋವ ದೇವರು ನಾರುಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ, “ಚಕ್ರಗಳ ಮಧ್ಯದಿಂದಲೂ, ಕೆರೂಬಿಯರ ಮಧ್ಯದಿಂದಲೂ ಬೆಂಕಿಯನ್ನು ತೆಗೆದುಕೊಳ್ಳಲು,” ಆಜ್ಞಾಪಿಸಿದನು. ಮನುಷ್ಯನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು.</verse>
				<verse number="7">ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಬೆಂಕಿಗೆ ಚಾಚಿ, ಸ್ವಲ್ಪ ತೆಗೆದುಕೊಂಡು ನಾರುಮಡಿಯನ್ನು ಧರಿಸಿಕೊಂಡಿದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು.</verse>
				<verse number="8">ಕೆರೂಬಿಯರಲ್ಲಿ ಅವರ ರೆಕ್ಕೆಗಳ ಕೆಳಗೆ ಮನುಷ್ಯನ ಕೈಗೆ ಸಮಾನವಾದದ್ದು ಕಂಡುಬಂತು.</verse>
				<verse number="9">ನಾನು ನೋಡಿದಾಗ, ಇಗೋ ಒಬ್ಬೊಬ್ಬ ಕೆರೂಬಿಯನ ಬಳಿಯಲ್ಲಿ ಒಂದು ಚಕ್ರ, ಈ ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳಿದ್ದವು. ಆ ಚಕ್ರಗಳ ವರ್ಣವು ಹೊಳೆಯುವ ಪೀತರತ್ನದ ಹಾಗಿತ್ತು.</verse>
				<verse number="10">ಆ ನಾಲ್ಕಕ್ಕೂ ಒಂದೇ ರೂಪವಿತ್ತು. ಚಕ್ರದೊಳಗೆ ಇನ್ನೊಂದು ಚಕ್ರವು ರಚಿಸಿದ್ದ ಹಾಗೆ ಇದ್ದವು.</verse>
				<verse number="11">ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು. ಕೆರೂಬಿಗಳು ಹೋದಂತೆ ಚಕ್ರಗಳು ತಿರುಗಲಿಲ್ಲ. ಎದುರುಮುಖವಾಗಿ ಹೋಗುತ್ತಿದ್ದವೇ ಹೊರತು ಓರೆಯಾಗಿ ಹೋಗುತ್ತಿರಲಿಲ್ಲ.</verse>
				<verse number="12">ಅವುಗಳ ದೇಹ, ಬೆನ್ನು, ಕೈ, ರೆಕ್ಕೆ ಮತ್ತು ಚಕ್ರಗಳು ಇವೆಲ್ಲವುಗಳ ಸುತ್ತಲೂ ಕಣ್ಣುಗಳಿಂದ ತುಂಬಿದ್ದವು, ಮತ್ತು ಅವನ ಎಲ್ಲಾ ನಾಲ್ಕು ಚಕ್ರಗಳು ಕಣ್ಣುಗಳಿಂದ ತುಂಬಿದ್ದವು.</verse>
				<verse number="13">ಆ ಚಕ್ರಗಳನ್ನು, “ತಿರುಗುವ ಚಕ್ರಗಳು” ಎಂದು ಕರೆಯುತ್ತಾರೆ ಎಂದು ನಾನು ಕೇಳಿದೆ.</verse>
				<verse number="14">ಒಬ್ಬೊಬ್ಬ ಕೆರೂಬಿಗೆ ನಾಲ್ಕು ಮುಖಗಳಿದ್ದವು. ಮೊದಲನೆಯ ಮುಖವು ಕೆರೂಬಿಯ ಮುಖ, ಎರಡನೆಯ ಮುಖವು ಮನುಷ್ಯನ ಮುಖ, ಮೂರನೆಯದು ಸಿಂಹದ ಮುಖ ಮತ್ತು ನಾಲ್ಕನೆಯದು ಹದ್ದಿನ ಮುಖಗಳಾಗಿದ್ದವು.</verse>
				<verse number="15">ಆಗ ಕೆರೂಬಿಯರು ಮೇಲಕ್ಕೆತ್ತಲಾದರು. ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಜೀವಗಳು ಇವೇ.</verse>
				<verse number="16">ಕೆರೂಬಿಯರು ಚಲಿಸಿದಾಗ, ಚಕ್ರಗಳು ಅವರ ಸಂಗಡ ಹೋದವು. ಕೆರೂಬಿಯರು ಭೂಮಿಯನ್ನು ಬಿಟ್ಟು ಮೇಲೇರುವಾಗ ತಮ್ಮ ರೆಕ್ಕೆಗಳನ್ನು ಚಾಚಿದಾಗ, ಅವರ ಚಕ್ರಗಳು ಪಕ್ಕಕ್ಕೆ ತಿರುಗಲಿಲ್ಲ.</verse>
				<verse number="17">ಜೀವಿಗಳ ಆತ್ಮ ಆ ಚಕ್ರಗಳಲ್ಲಿಯೂ ಇದ್ದ ಕಾರಣ, ಅವು ನಿಂತು ಹೋದಾಗ ಇವೂ ನಿಂತುಹೋದವು. ಅವು ಏರಿದಾಗ, ಇವೂ ಅವುಗಳ ಜೊತೆಯಲ್ಲೇ ಏರಿದವು.</verse>
				<verse number="18">ಆಗ ಯೆಹೋವ ದೇವರ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು.</verse>
				<verse number="19">ನಾನು ನೋಡುವಾಗಲೇ ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿಕೊಂಡು, ಭೂಮಿಯನ್ನು ಬಿಟ್ಟು ಮೇಲಕ್ಕೇರಿ ಹೋದರು. ಅವು ಹೊರಟಾಗ, ಚಕ್ರಗಳೂ ಅದರ ಸಂಗಡ ಇದ್ದವು. ಅವರು ಯೆಹೋವ ದೇವರ ಆಲಯದ ಪೂರ್ವದಿಕ್ಕಿನ ಬಾಗಿಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಇಸ್ರಾಯೇಲಿನ ದೇವರ ಮಹಿಮೆಯು ಅವರ ಮೇಲೆ ಇತ್ತು.</verse>
				<verse number="20">ಇಸ್ರಾಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ. ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು.</verse>
				<verse number="21">ಪ್ರತಿಯೊಬ್ಬನಿಗೂ ನಾಲ್ಕು ಮುಖಗಳು ಮತ್ತು ನಾಲ್ಕು ರೆಕ್ಕೆಗಳು ಇದ್ದವು. ಅವರ ರೆಕ್ಕೆಗಳ ಕೆಳಗೆ ಮನುಷ್ಯರ ಕೈಗಳ ರೂಪವಿತ್ತು.</verse>
				<verse number="22">ಅವುಗಳ ಮುಖಗಳ ರೂಪವು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಆ ಮುಖಗಳ ಹಾಗೆ ಇತ್ತು. ಅವರಲ್ಲಿ ಪ್ರತಿಯೊಬ್ಬರೂ ನೇರವಾಗಿ ಹೋಗುತ್ತಿದ್ದರು.</verse>
			</chapter>
			<chapter number="11">
				<verse number="1">ಆಮೇಲೆ ದೇವರಾತ್ಮರು ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಯೆಹೋವ ದೇವರ ಆಲಯದ ಪೂರ್ವದಿಕ್ಕಿನ ಬಾಗಿಲಿಗೆ, ನನ್ನನ್ನು ಎತ್ತಿಕೊಂಡು ಹೋದರು. ಪ್ರವೇಶದ್ವಾರದಲ್ಲಿ ಇಪ್ಪತ್ತೈದು ಮಂದಿ ಮನುಷ್ಯರು ಇದ್ದರು. ಅವರೊಳಗೆ ನಾನು ಜನರ ಪ್ರಧಾನರಾದ ಅಜ್ಜೂರನ ಮಗ ಯಾಜನ್ಯನನ್ನೂ, ಬೆನಾಯನ ಮಗ ಪೆಲಟೀಯನನ್ನೂ ನೋಡಿದೆನು.</verse>
				<verse number="2">ಆಮೇಲೆ ಯೆಹೋವ ದೇವರು ನನಗೆ, “ಮನುಷ್ಯಪುತ್ರನೇ, ಈ ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ, ದುರಾಲೋಚನೆಗಳನ್ನು ಹೇಳಿಕೊಡುವವರು ಈ ಜನರೇ.</verse>
				<verse number="3">ಅವರು, ‘ಇತ್ತೀಚಿಗೆ ನಮ್ಮ ಮನೆಗಳು ನಿರ್ಮಾಣವಾಗಿಲ್ಲವೇ? ಈ ಪಟ್ಟಣವು ಪಾತ್ರೆ, ಮತ್ತು ನಾವು ಅದರಲ್ಲಿರುವ ಮಾಂಸ,’ ಎನ್ನುತ್ತಾರೆ.</verse>
				<verse number="4">ಆದ್ದರಿಂದ ಮನುಷ್ಯಪುತ್ರನೇ, ಅವರಿಗೆ ವಿರೋಧವಾಗಿ ಪ್ರವಾದಿಸು.”</verse>
				<verse number="5">ಯೆಹೋವ ದೇವರ ಆತ್ಮವು ನನ್ನ ಮೇಲೆ ಬಂದು ತಿಳಿಸಲು ಹೇಳಿದ್ದೇನೆಂದರೆ: “ಇಸ್ರಾಯೇಲಿನ ಮನೆತನದವರೇ, ನೀವು ಹೀಗೆ ಹೇಳಿದ್ದೀರಿ. ಏಕೆಂದರೆ ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಎಲ್ಲವುಗಳನ್ನು ನಾನು ಬಲ್ಲೆನು.</verse>
				<verse number="6">ನೀವು ಈ ಪಟ್ಟಣದಲ್ಲಿ ನರಹತ್ಯೆಯನ್ನು ಹೆಚ್ಚೆಚ್ಚಾಗಿ ಮಾಡಿ, ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.</verse>
				<verse number="7">“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಕೊಂದು ಹಾಕಿದವರ ದೇಹಗಳೇ ಮಾಂಸ, ಈ ಪಟ್ಟಣವು ಬೇಯಿಸುವ ಪಾತ್ರೆ. ಆದರೆ ನಾನು ನಿಮ್ಮನ್ನು ಅದರಿಂದ ಹೊರಗೆ ತರುತ್ತೇನೆ.</verse>
				<verse number="8">ನೀವು ಖಡ್ಗಕ್ಕೆ ಭಯಪಟ್ಟಿರಿ. ನಾನು ನಿಮ್ಮ ಮೇಲೆ ಒಂದು ಖಡ್ಗವನ್ನು ತರುತ್ತೇನೆ. ಇದು ಸಾರ್ವಭೌಮ ಯೆಹೋವ ದೇವರ ನುಡಿ.</verse>
				<verse number="9">ನಾನು ನಿಮ್ಮನ್ನು ಪಟ್ಟಣದ ಮಧ್ಯದಿಂದ ಹೊರಗೆ ತಂದು ಪರಕೀಯರ ಕೈಗಳಿಗೆ ಒಪ್ಪಿಸುವೆನು ಮತ್ತು ನ್ಯಾಯತೀರ್ಪುಗಳನ್ನು ನಡೆಸುವೆನು.</verse>
				<verse number="10">ನೀವು ಖಡ್ಗದಿಂದ ನಾಶವಾಗುವಿರಿ. ನಾನು ಇಸ್ರಾಯೇಲಿನ ಮೇರೆಯಲ್ಲಿ ನ್ಯಾಯತೀರಿಸುವೆನು. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿಯುವುದು.</verse>
				<verse number="11">ಈ ಪಟ್ಟಣವು ಪಾತ್ರೆಯಾಗುವುದಿಲ್ಲ. ನೀವು ಅದರಲ್ಲಿ ಮಾಂಸವೂ ಆಗುವುದಿಲ್ಲ. ಇಸ್ರಾಯೇಲಿನ ಮೇರೆಯಲ್ಲಿ ನಾನು ನ್ಯಾಯತೀರಿಸುವೆನು.</verse>
				<verse number="12">ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ. ಏಕೆಂದರೆ ನೀವು ನನ್ನ ನಿಯಮಗಳಂತೆ ನಡೆಯಲಿಲ್ಲ. ನನ್ನ ನ್ಯಾಯವಿಧಿಗಳನ್ನು ಪಾಲಿಸಲಿಲ್ಲ. ಆದರೆ ನಿಮ್ಮ ಸುತ್ತಲಿರುವ ಇತರ ಜನಾಂಗಗಳ ಆಚಾರಗಳ ಪ್ರಕಾರ ಮಾಡಿದ್ದೀರಿ.”</verse>
				<verse number="13">ನಾನು ಪ್ರವಾದಿಸುತ್ತಿರುವಾಗ, ಬೆನಾಯನ ಮಗನಾದ ಪೆಲಟೀಯನು ಸತ್ತನು. ಆಗ ನಾನು ಮುಖ ಕೆಳಗಾಗಿ ಬಿದ್ದು, ಗಟ್ಟಿಯಾಗಿ ಕೂಗಿ, “ಸಾರ್ವಭೌಮ ಯೆಹೋವ ದೇವರೇ, ನೀವು ಇಸ್ರಾಯೇಲಿನಲ್ಲಿ ಉಳಿದವರನ್ನು ಪೂರ್ಣವಾಗಿ ಮುಗಿಸಿಬಿಡುತ್ತೀರೋ?” ಎಂದು ಹೇಳಿದನು.</verse>
				<verse number="14">ಯೆಹೋವ ದೇವರ ವಾಕ್ಯವು ನನಗೆ ಬಂದಿತು:</verse>
				<verse number="15">“ಮನುಷ್ಯಪುತ್ರನೇ, ನಿನ್ನ ಸಹೋದರರಿಗೆ, ನಿನ್ನ ಅಣ್ಣಂದಿರಿಗೆ, ನಿನ್ನ ನೆಂಟರಿಷ್ಟರಿಗೆ, ಅಂತು ಇಸ್ರಾಯೇಲ್ ವಂಶದ ಎಲ್ಲರಿಗೆ, ಯೆರೂಸಲೇಮಿನಲ್ಲೇ ಉಳಿದಿರುವವರು, ‘ಯೆಹೋವ ದೇವರ ಬಳಿಯಿಂದ ದೂರವಾಗಿ ತೊಲಗಿರಿ, ಈ ನಾಡು ನಮಗೇ ಸೊತ್ತಾಗಿ ಸಿಕ್ಕಿದೆ,’ ಎಂದು ಹೇಳಿ ಹೀನೈಸುತ್ತಿದ್ದಾರಲ್ಲವೇ?</verse>
				<verse number="16">“ಆದ್ದರಿಂದ ನಾನು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಅವರನ್ನು ಇತರ ಜನಾಂಗಗಳಿಂದ ದೂರ ಹಾಕಿದರೂ, ದೇಶಗಳಲ್ಲಿ ಚದರಿಸಿದರೂ, ಅವರು ಹೋಗುವ ದೇಶಗಳಲ್ಲಿ ನಾನು ಸ್ವಲ್ಪ ಕಾಲದವರೆಗೆ ಪರಿಶುದ್ಧ ಸ್ಥಳವಾಗಿರುವೆನು.’</verse>
				<verse number="17">“ಆದ್ದರಿಂದ ನೀನು ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಶ್ಚಯವಾಗಿ ನಿಮ್ಮನ್ನು ಜನಾಂಗಗಳೊಳಗಿಂದ, ನೀವು ಚದರಿಹೋದ ದೇಶಗಳೊಳಗಿಂದ ಕೂಡಿಸುತ್ತೇನೆ. ಇಸ್ರಾಯೇಲ್ ದೇಶವನ್ನು ನಿಮಗೆ ತಿರುಗಿ ಕೊಡುವೆನು.’</verse>
				<verse number="18">“ಅವರು ಅಲ್ಲಿಗೆ ಹಿಂತಿರುಗಿ ಮತ್ತು ಅದರಲ್ಲಿರುವ ಎಲ್ಲಾ ಅನುಪಯುಕ್ತ ಆಕೃತಿಗಳನ್ನು ಮತ್ತು ಅಸಹ್ಯಕರ ವಿಗ್ರಹಗಳನ್ನು ತೆಗೆದುಹಾಕುತ್ತಾರೆ.</verse>
				<verse number="19">ಅವರಿಗೆ ಒಂದೇ ಮನಸ್ಸನ್ನು ಕೊಡುವೆನು. ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು. ಅವರೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆಯುವೆನು. ಅವರಿಗೆ ಮೃದು ಹೃದಯವನ್ನು ಕೊಡುವೆನು.</verse>
				<verse number="20">ಆಗ ಅವರು ನನ್ನ ನಿಯಮಗಳನ್ನು ಕೈಗೊಂಡು ಜಾಗರೂಕತೆಯಿಂದ ಪಾಲಿಸುವರು. ನನ್ನ ನಿಯಮಗಳನ್ನು ಕೈಗೊಳ್ಳುವರು. ಅವರು ನನ್ನ ಜನರಾಗುವರು, ನಾನು ಅವರ ದೇವರಾಗುವೆನು.</verse>
				<verse number="21">ಆದರೆ ಯಾರ ಹೃದಯವು ಅನುಪಯುಕ್ತ ಆಕೃತಿಗಳನ್ನು ಮತ್ತು ಅಸಹ್ಯಕರ ವಿಗ್ರಹಗಳನ್ನು ಅನುಸರಿಸುತ್ತದೋ, ನಾನು ಅವರ ದುರ್ಮಾರ್ಗವನ್ನು ಅವರ ತಲೆಗೇ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”</verse>
				<verse number="22">ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು. ಇಸ್ರಾಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲೆಸಿತ್ತು.</verse>
				<verse number="23">ಯೆಹೋವ ದೇವರ ಮಹಿಮೆಯು ಪಟ್ಟಣದ ಮಧ್ಯದೊಳಗಿಂದ ಮೇಲಕ್ಕೇರಿ, ಪಟ್ಟಣದ ಪೂರ್ವದಿಕ್ಕಿನಲ್ಲಿರುವ ಪರ್ವತದ ಮೇಲೆ ನಿಂತಿತು.</verse>
				<verse number="24">ಅನಂತರ ದೇವರಾತ್ಮರು, ದೇವರ ಆತ್ಮರಿಂದಾದ ದರ್ಶನದಲ್ಲಿ ನನ್ನನ್ನು ಬಾಬಿಲೋನಿಯರ ದೇಶಕ್ಕೆ ಸೆರೆಯವರ ಬಳಿಗೆ ಎತ್ತಿಕೊಂಡು ಹೋದರು. ಆಗ ನಾನು ನೋಡಿದ ದರ್ಶನವು ನನ್ನಿಂದ ಮೇಲೆ ಹೋಯಿತು.</verse>
				<verse number="25">ಆಮೇಲೆ ಯೆಹೋವ ದೇವರು ನನಗೆ ತೋರಿಸಿದ ಎಲ್ಲಾ ಸಂಗತಿಗಳನ್ನು ಸೆರೆಯಲ್ಲಿರುವವರಿಗೆ ಹೇಳಿದೆನು.</verse>
			</chapter>
			<chapter number="12">
				<verse number="1">ಯೆಹೋವ ದೇವರ ವಾಕ್ಯವು ನನಗೆ ಬಂದಿತು:</verse>
				<verse number="2">“ಮನುಷ್ಯಪುತ್ರನೇ, ನೀನು ತಿರುಗಿಬೀಳುವ ಮನೆತನದವರ ಮಧ್ಯದಲ್ಲಿ ವಾಸಿಸುತ್ತಿರುವ, ಅವರಿಗೆ ನೋಡುವುದಕ್ಕೆ ಕಣ್ಣುಗಳುಂಟು, ಆದರೆ ನೋಡುವುದಿಲ್ಲ; ಕೇಳುವುದಕ್ಕೆ ಕಿವಿಗಳುಂಟು, ಕೇಳುವುದಿಲ್ಲ. ಅವರು ತಿರುಗಿಬೀಳುವ ಮನೆತನದವರು.</verse>
				<verse number="3">“ಆದ್ದರಿಂದ ಮನುಷ್ಯಪುತ್ರನೇ, ನೀನು ಸಲಕರಣೆಗಳನ್ನು ಸಿದ್ಧಮಾಡಿ, ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿಹೋಗು, ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು. ಅವರು ದ್ರೋಹಿಗಳಾದವರ ಮನೆತನದವರಾದರೂ, ಒಂದು ವೇಳೆ ಅರ್ಥಮಾಡಿಕೊಳ್ಳಬಹುದು.</verse>
				<verse number="4">ನಿನ್ನ ಸಲಕರಣೆಗಳನ್ನು ತೆಗೆದುಕೊಂಡು ಹೋಗಲು ಅವುಗಳನ್ನು ಹಗಲಿನಲ್ಲಿ ಅವರ ಕಣ್ಣುಗಳ ಮುಂದೆ ಹೊರಗೆ ತರಬೇಕು. ಸಂಜೆಯಲ್ಲಿ ಸೆರೆಗೆ ಹೋಗುವವರ ಹಾಗೆ</verse>
				<verse number="5">ನೀನು ಅವರ ಕಣ್ಣುಗಳ ಮುಂದೆಯೇ ಗೋಡೆಯನ್ನು ಕೊರೆದು, ಅಲ್ಲಿಂದ ನಿನ್ನ ಸಲಕರಣೆಗಳನ್ನು ಹೊತ್ತುಕೊಂಡು ಹೊರಗೆ ಹೊರಟು ಹೋಗು.</verse>
				<verse number="6">ಅವರ ಕಣ್ಣುಗಳ ಮುಂದೆ ಸಲಕರಣೆಗಳನ್ನು ಹೆಗಲಿನ ಮೇಲೆ ಹೊತ್ತುಕೊಂಡು ಮುಸ್ಸಂಜೆಯಲ್ಲಿ ಹೋಗಬೇಕು; ನೆಲವನ್ನು ನೋಡದ ಹಾಗೆ ನಿನ್ನ ಮುಖವನ್ನು ಮುಚ್ಚಿಕೊಳ್ಳಬೇಕು. ನಾನು ನಿನ್ನನ್ನು ಇಸ್ರಾಯೇಲಿನ ಮನೆತನದಲ್ಲಿರುವವರಿಗೆ ಗುರುತನ್ನಾಗಿ ಇಟ್ಟಿದ್ದೇನೆ.”</verse>
				<verse number="7">ನಾನು ಆಜ್ಞೆಯನ್ನು ಹೊಂದಿದ ಪ್ರಕಾರ ಮಾಡಿದೆನು. ನನ್ನ ಸರಕುಗಳನ್ನು ಹಗಲಿನಲ್ಲಿಯೇ ಹೊರಗೆ ತಂದೆನು. ಸಂಜೆಯಲ್ಲಿ ನನ್ನ ಕೈಯಿಂದಲೇ ಗೋಡೆಯನ್ನು ಕೊರೆದೆನು. ಅದನ್ನು ನಾನು ಮುಸ್ಸಂಜೆಯಲ್ಲಿ ಹೊರಗೆ ತಂದು, ಅವರ ಕಣ್ಣುಗಳ ಮುಂದೆ ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಹೋದೆನು.</verse>
				<verse number="8">ಬೆಳಗಿನ ಜಾವದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು:</verse>
				<verse number="9">“ಮನುಷ್ಯಪುತ್ರನೇ, ದ್ರೋಹಿ ವಂಶದವರಾದ ಇಸ್ರಾಯೇಲರು, ‘ನೀನು ಏನು ಮಾಡುತ್ತಿರುವೆ?’ ಎಂದು ನಿನ್ನನ್ನು ಕೇಳಿದ್ದಾರಲ್ಲವೇ?</verse>
				<verse number="10">“ಅವರಿಗೆ ನೀನು ಹೀಗೆ ಹೇಳಬೇಕೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ಈ ಪ್ರವಾದನೆಯು ಯೆರೂಸಲೇಮಿನಲ್ಲಿರುವ ಪ್ರಭುವನ್ನೂ, ಅದರಲ್ಲಿರುವ ಸಮಸ್ತ ಇಸ್ರಾಯೇಲಿನ ಮನೆತನದವರನ್ನೂ ಕುರಿತದ್ದಾಗಿದೆ.</verse>
				<verse number="11">ಅವರಿಗೆ ಹೀಗೆ ಹೇಳು, ‘ನಾನು ನಿಮಗೆ ಗುರುತಾಗಿದ್ದೇನೆ.’ “ನಾನು ಮಾಡಿದ ಹಾಗೆ ಅವರಿಗೆ ಮಾಡಲಾಗುವುದು. ಅವರು ಗುಲಾಮರಾಗಿ ಸೆರೆಗೆ ಹೋಗುವರು.</verse>
				<verse number="12">“ಅವರ ಮಧ್ಯದಲ್ಲಿರುವ ರಾಜಪುತ್ರನು ಹೆಗಲ ಮೇಲೆ ಹೊರೆಯನ್ನು ಹೊತ್ತುಕೊಂಡು ಮುಸ್ಸಂಜೆಯಲ್ಲಿ ಹೊರಟು ಹೋಗುವನು. ಅವರು ಗೋಡೆಯನ್ನು ಕೊರೆದು, ಆ ಕಿಂಡಿಯ ಮೂಲಕ ತಮ್ಮ ಸಲಕರಣೆಗಳನ್ನು ಹೊರಗೆ ಸಾಗಿಸುವರು. ಅವನು ತನ್ನ ಕಣ್ಣುಗಳಿಂದ ನೆಲವನ್ನು ನೋಡದ ಹಾಗೆ ಮುಖವನ್ನು ಮುಚ್ಚಿಕೊಳ್ಳುವನು.</verse>
				<verse number="13">ನನ್ನ ಬಲೆಯನ್ನೂ ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯರ ನಾಡಾದ ಬಾಬಿಲೋನಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು.</verse>
				<verse number="14">ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ, ಅವನ ಎಲ್ಲಾ ಸೈನ್ಯಗಳನ್ನೂ, ಎಲ್ಲಾ ದಿಕ್ಕುಗಳಿಗೆ ಚದರಿಸಿ, ಅವರ ಹಿಂದೆ ಖಡ್ಗವನ್ನು ಬೀಸುವೆನು.</verse>
				<verse number="15">“ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿ, ದೇಶಗಳ ಮೇಲೆ ಚೆಲ್ಲಾಪಿಲ್ಲಿಮಾಡುವಾಗ, ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವರು.</verse>
				<verse number="16">ಆದರೆ ಅವರು ಎಲ್ಲಿ ಹೋಗುವರೋ, ಆ ಜನಾಂಗಗಳೊಳಗೆ ಅವರ ಹೇಯ ಕಾರ್ಯಗಳನ್ನು ಇವರು ತಿಳಿದುಕೊಳ್ಳುವಂತೆ ಅವರಲ್ಲಿ ಕೆಲವರನ್ನು ಖಡ್ಗದಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವರು.”</verse>
				<verse number="17">ಯೆಹೋವ ದೇವರ ವಾಕ್ಯವು ನನಗೆ ಬಂದಿತು,</verse>
				<verse number="18">“ಮನುಷ್ಯಪುತ್ರನೇ, ಆಹಾರವನ್ನು ನಡುಗುತ್ತಾ ಊಟಮಾಡು ಮತ್ತು ನೀರನ್ನು ನಡುಗುವಿಕೆಯಿಂದಲೂ, ಎಚ್ಚರಿಕೆಯಿಂದಲೂ ಕುಡಿ.</verse>
				<verse number="19">ನಿನ್ನ ದೇಶದ ಜನರಿಗೆ ಹೀಗೆ ಹೇಳು, ‘ಯೆರೂಸಲೇಮಿನ ನಿವಾಸಿಗಳಿಗೆ ಮತ್ತು ಇಸ್ರಾಯೇಲರ ದೇಶಕ್ಕೆ ಸಾರ್ವಭೌಮ ಯೆಹೋವ ದೇವರು ಹೇಳಿದ್ದೇನೆಂದರೆ, ಅವರು ತಮ್ಮ ರೊಟ್ಟಿಯನ್ನು ಎಚ್ಚರಿಕೆಯಿಂದಲೇ ತಿನ್ನುವರು, ನೀರನ್ನು ಅಂಜಿಕೆಯಿಂದಲೇ ಕುಡಿಯುವರು. ಅದರಲ್ಲಿ ವಾಸವಾಗಿರುವವರೆಲ್ಲರ ಹಿಂಸಾಚಾರದಿಂದ ಅವರ ದೇಶವು ಸೊತ್ತನ್ನೆಲ್ಲಾ ಕಳೆದುಕೊಂಡು ಹಾಳಾಗುವುದು.</verse>
				<verse number="20">ನಿವಾಸಿಗಳುಳ್ಳ ಪಟ್ಟಣಗಳು ಹಾಳಾಗುವುವು. ದೇಶವು ನಿರ್ಜನವಾಗುವುದು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.’ ”</verse>
				<verse number="21">ಯೆಹೋವ ದೇವರ ವಾಕ್ಯವು ನನಗೆ ಬಂದಿತು:</verse>
				<verse number="22">“ಮನುಷ್ಯಪುತ್ರನೇ, ‘ದಿನಗಳು ಬಹಳವಾಗುತ್ತಿವೆ. ದಿವ್ಯದರ್ಶನಗಳೆಲ್ಲಾ ನಿರರ್ಥಕ ಎಂದು ಇಸ್ರಾಯೇಲ್ ದೇಶದಲ್ಲಿ ಹೇಳಿಕೊಳ್ಳುವ ಈ ಗಾದೆ ಏನು’?</verse>
				<verse number="23">ಆದ್ದರಿಂದ ಅವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನಾನು ಈ ಗಾದೆಯನ್ನು ನಿಲ್ಲಿಸುತ್ತೇನೆ. ಅದನ್ನು ಇನ್ನು ಮೇಲೆ ಇಸ್ರಾಯೇಲಿನಲ್ಲಿ ಗಾದೆಯಂತೆ ಉಪಯೋಗಿಸುವುದಿಲ್ಲ. ದಿನಗಳು ಹತ್ತಿರವಾಗಿವೆ. ಪ್ರತಿದರ್ಶನವು ನೆರವೇರಲಿದೆ’ ಎಂದು ಅವರಿಗೆ ಹೇಳು.</verse>
				<verse number="24">‘ಇಸ್ರಾಯೇಲಿನ ಮನೆತನದವರೊಳಗೆ ಇನ್ನು ಮೇಲೆ ಯಾವ ಸುಳ್ಳು ದರ್ಶನವೂ, ಮೋಸದ ಶಕುನವೂ ಇರುವುದಿಲ್ಲ.</verse>
				<verse number="25">ನಾನೇ ಯೆಹೋವ ದೇವರು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವುದು; ಅದು ಇನ್ನು ನಿಧಾನವಾಗುವುದಿಲ್ಲ. ದ್ರೋಹಿಗಳಾದ ಮನೆತನದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡೆಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”</verse>
				<verse number="26">ಯೆಹೋವ ದೇವರ ವಾಕ್ಯವು ನನಗೆ ಬಂದಿತು:</verse>
				<verse number="27">“ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು, ‘ಇವನಿಗಾದ ದರ್ಶನವು ಬಹುದೂರ ಕಾಲಕ್ಕೆ ಸಂಬಂಧಿಸಿದ್ದು, ದೂರ ಕಾಲವನ್ನು ಕುರಿತು ಪ್ರವಾದಿಸುತ್ತಾನೆ,’ ಎಂದು ಹೇಳುತ್ತಾರೆ.”</verse>
				<verse number="28">“ಆದ್ದರಿಂದ ಅವರಿಗೆ ಹೀಗೆ ಹೇಳು: ‘ಸಾರ್ವಭೌಮ ಯೆಹೋವ ದೇವರು ಇಂತೆನ್ನುತ್ತಾರೆ, ನನ್ನ ಯಾವುದೇ ಮಾತು ಇನ್ನು ತಡವಾಗದು. ನಾನು ಹೇಳಿದ್ದೆಲ್ಲವನ್ನು ನೆರವೇರುವುದೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”</verse>
			</chapter>
			<chapter number="13">
				<verse number="1">ಯೆಹೋವ ದೇವರ ವಾಕ್ಯವು ನನಗೆ ಬಂದಿತು:</verse>
				<verse number="2">“ನರಪುತ್ರನೇ, ಪ್ರವಾದಿಸುತ್ತಿರುವ ಇಸ್ರಾಯೇಲಿನ ಮನೆತನದ ಪ್ರವಾದಿಗಳಿಗೆ ವಿರುದ್ಧವಾಗಿ ನೀನು ಪ್ರವಾದಿಸಿ, ತಮ್ಮ ಸ್ವಂತ ಕಲ್ಪನೆಗಳಿಂದ ಪ್ರವಾದಿಸುತ್ತಿರುವವರಿಗೆ ಹೀಗೆ ಹೇಳು: ‘ಯೆಹೋವ ದೇವರ ವಾಕ್ಯವನ್ನು ಕೇಳಿರಿ;</verse>
				<verse number="3">ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುತ್ತಿರುವ ಮೂರ್ಖ ಪ್ರವಾದಿಗಳೇ ನಿಮಗೆ ಕಷ್ಟ!</verse>
				<verse number="4">ಇಸ್ರಾಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ನರಿಗಳಂತಿದ್ದಾರೆ.</verse>
				<verse number="5">ಯೆಹೋವ ದೇವರ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ಇಸ್ರಾಯೇಲ್ ಮನೆತನದವರ ಸುತ್ತಲೂ ಗೋಡೆಯನ್ನು ಕಟ್ಟಲಿಲ್ಲ, ನೀವು ಪೌಳಿಯ ಒಡಕುಗಳನ್ನೇರಲಿಲ್ಲ.</verse>
				<verse number="6">“ಯೆಹೋವ ದೇವರು ಇಂತೆನ್ನುತ್ತಾರೆ,” ಎಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ, ಕೇಳಿಸಿದ ಕಣಿ ಸುಳ್ಳು, ಯೆಹೋವ ದೇವರು ಅವರನ್ನು ಕಳುಹಿಸಲಿಲ್ಲ, ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.</verse>
				<verse number="7">ನಾನು ಮಾತಾಡದೇ ಇದ್ದರೂ, “ಯೆಹೋವ ದೇವರು ಇಂತೆನ್ನುತ್ತಾರೆ,” ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನ ಮಿಥ್ಯ, ನೀವು ಹೇಳಿದ ಕಣಿಯು ಸುಳ್ಳು.</verse>
				<verse number="8">“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಸುಳ್ಳಾಗಿ ಮಾತನಾಡಿದ್ದರಿಂದಲೂ, ಸುಳ್ಳನ್ನು ದರ್ಶಿಸಿದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನು. ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="9">ಸುಳ್ಳಾದದ್ದನ್ನು ದರ್ಶಿಸಿ, ಸುಳ್ಳು ಕಣಿ ಹೇಳುವ ಪ್ರವಾದಿಗಳಿಗೆ ವಿರುದ್ಧವಾಗಿ ನನ್ನ ಹಸ್ತವಿರುವುದು. ಅವರು ನನ್ನ ಜನರ ಸಭೆಯಲ್ಲಿ ಇರುವುದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲಾಗುವುದೂ ಇಲ್ಲ. ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವುದೂ ಇಲ್ಲ. ಆಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.</verse>
				<verse number="10">“ ‘ಏಕೆಂದರೆ ಸಮಾಧಾನವಿಲ್ಲದಿರುವಾಗ ಅವರು, “ಸಮಾಧಾನವಿದೆ,” ಎಂದು ಹೇಳಿ, ನನ್ನ ಜನರನ್ನು ತಪ್ಪು ದಾರಿಗೆ ನಡೆಸಿದ್ದಾರೆ. ಒಬ್ಬನು ದುರ್ಬಲ ಗೋಡೆಯನ್ನು ಕಟ್ಟಿದರೆ, ಈ ಪ್ರವಾದಿಗಳ ಗುಂಪು ಅದಕ್ಕೆ ಸುಣ್ಣ ಹಚ್ಚಿದ್ದಾರೆ.</verse>
				<verse number="11">ಆದ್ದರಿಂದ ಸುಣ್ಣ ಹಚ್ಚುತ್ತಿರುವವನಿಗೆ ಅದು ಬೀಳುವುದೆಂದು ಹೇಳು. ಅಲ್ಲಿ ವಿಪರೀತ ಮಳೆ ಬರುವುದು ಮತ್ತು ದೊಡ್ಡ ಕಲ್ಮಳೆಯು ಬೀಳುವುದು. ಬಿರುಗಾಳಿಯು ಅದನ್ನು ಸೀಳಿಬಿಡುವುದು.</verse>
				<verse number="12">“ಗೋಡೆ ಬಿದ್ದುಹೋದ ಮೇಲೆ, ನೀವು ಹಚ್ಚಿದ ಸುಣ್ಣ ಎಲ್ಲಿ?” ಎಂದು ನಿಮಗೆ ಕೇಳುವರಲ್ಲವೆ?</verse>
				<verse number="13">“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದನ್ನು ನನ್ನ ರೋಷದಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ, ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳು ಸುರಿಯುವುವು.</verse>
				<verse number="14">ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ, ನೆಲಸಮಮಾಡಿ, ಅದರ ಅಸ್ತಿವಾರವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವಾಗ, ನೀವು ಅದರಲ್ಲಿ ನಾಶವಾಗುವಿರಿ. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿದುಬರುವುದು.</verse>
				<verse number="15">ಹೀಗೆ ನಾನು ಗೋಡೆಯಲ್ಲಿಯೂ, ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿಕೊಂಡು, “ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇರುವುದಿಲ್ಲವೆಂದೂ,</verse>
				<verse number="16">ಯೆರೂಸಲೇಮಿನ ವಿಷಯ ಪ್ರವಾದಿಸಿ, ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ಇರುವುದಿಲ್ಲವೆಂದೂ, ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.” ’</verse>
				<verse number="17">“ಈಗ ಮನುಷ್ಯಪುತ್ರನೇ, ನೀನು ತಮ್ಮ ಸ್ವಂತ ಕಲ್ಪನೆಯಿಂದ ಪ್ರವಾದಿಸುವ ನಿನ್ನ ಜನರ ಪುತ್ರಿಯರಿಗೆ ವಿರೋಧವಾಗಿ ನಿನ್ನ ಮುಖವನ್ನಿಟ್ಟು, ಅವರಿಗೆ ವಿರೋಧವಾಗಿ ಪ್ರವಾದಿಸಿ,</verse>
				<verse number="18">ಹೀಗೆ ಹೇಳು ಎಂದು, ‘ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಪ್ರಾಣಗಳನ್ನು ಬೇಟೆಯಾಡಬೇಕೆಂದು ಎಲ್ಲರ ಮೊಣಕೈಗಳಿಗೆ ದಿಂಡುಗಳನ್ನು ಹೊಲೆದು ಮತ್ತು ಪ್ರತಿಯೊಬ್ಬನ ಎತ್ತರದ ತಲೆಗಳಿಗೆ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಪುತ್ರಿಯರಿಗೆ ಕಷ್ಟ! ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ, ನಿಮ್ಮ ಬಳಿಗೆ ಬರುವ ಪ್ರಾಣಗಳನ್ನು ಬದುಕಿಸುವಿರೋ?</verse>
				<verse number="19">ಸುಳ್ಳಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಸಾಯದಿರುವವರನ್ನು ಸಾಯಿಸಿ, ಸಾಯುವವರನ್ನು ಬದುಕಿಸಿ, ಒಂದು ಹಿಡಿ ಜವೆಗೋಧಿಗೂ, ತುಂಡು ರೊಟ್ಟಿಗೂ ನನ್ನನ್ನು ನನ್ನ ಜನರೊಳಗೆ ಅಪವಿತ್ರಗೊಳಿಸುವಿರೋ?</verse>
				<verse number="20">“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಿಗಳಿಗೆ ವಿರೋಧವಾಗಿದ್ದೇನೆ. ಅವುಗಳನ್ನು ನಿಮ್ಮ ತೋಳುಗಳಿಂದ ಹರಿದುಬಿಡುವೆನು. ನೀವು ಬೇಟೆಯಾಡುವಂತೆ ಬೇಟೆಯಾಡಿದ ಪ್ರಾಣಗಳನ್ನು ಬಿಡಿಸುತ್ತೇನೆ.</verse>
				<verse number="21">ನಿಮ್ಮ ವಸ್ತ್ರಗಳನ್ನು ಹರಿದು, ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುತ್ತೇನೆ. ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ. ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.</verse>
				<verse number="22">ಏಕೆಂದರೆ ನಾನು ಯಾವನನ್ನು ದುಃಖಪಡಿಸಲಿಲ್ಲವೋ, ಆ ನೀತಿವಂತರ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು, ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವರನ್ನು ಪ್ರೋತ್ಸಾಹಿಸಿದ್ದೀರಿ.</verse>
				<verse number="23">ಆದ್ದರಿಂದ ನೀವು ಇನ್ನು ಮೇಲೆ ಸುಳ್ಳು ದರ್ಶನಗಳನ್ನು ಕಾಣುವುದಿಲ್ಲ ಮತ್ತು ಸುಳ್ಳು ದೈವೋಕ್ತಿಗಳನ್ನು ಅಭ್ಯಾಸಿಸುವುದಿಲ್ಲ. ಏಕೆಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ಬಿಡಿಸುವೆನು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.’ ”</verse>
			</chapter>
			<chapter number="14">
				<verse number="1">ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು.</verse>
				<verse number="2">ಆಗ ಯೆಹೋವ ದೇವರ ವಾಕ್ಯವು ನನಗೆ ಬಂದಿತು:</verse>
				<verse number="3">“ಮನುಷ್ಯಪುತ್ರನೇ, ಈ ಮನುಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ, ತಮ್ಮ ಅಕ್ರಮವಾದ ವಿಘ್ನಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವೆಲ್ಲವುಗಳಿಗಾಗಿ ನಾನು ಅವರನ್ನು ವಿಚಾರಿಸಬೇಕೇ?</verse>
				<verse number="4">ಆದ್ದರಿಂದ ನೀನು ಅವರ ಸಂಗಡ ಮಾತನಾಡಿ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲಿ ನೆಲೆಗೊಳಿಸಿ, ತಮ್ಮ ಅಕ್ರಮದ ವಿಘ್ನಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ಬರುವ ಅವನಿಗೆ ಯೆಹೋವ ದೇವರಾದ ನಾನು ಅವರ ವಿಗ್ರಹಗಳ ಸಮೂಹಕ್ಕೆ ತಕ್ಕ ಹಾಗೆ ಉತ್ತರಕೊಡುವೆನು.</verse>
				<verse number="5">ತಮ್ಮ ವಿಗ್ರಹಗಳಿಗಾಗಿ ನನ್ನನ್ನು ತೊರೆದ ಇಸ್ರಾಯೇಲ್ ಜನರ ಹೃದಯಗಳನ್ನು ಪುನಃ ವಶಪಡಿಸಿಕೊಳ್ಳಲು ನಾನು ಇದನ್ನು ಮಾಡುತ್ತೇನೆ.’</verse>
				<verse number="6">“ಆದ್ದರಿಂದ ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮಾನಸಾಂತರಪಟ್ಟು ನಿಮ್ಮ ವಿಗ್ರಹಗಳನ್ನು ಬಿಟ್ಟು ನೀವಾಗಿಯೇ ತಿರುಗಿಕೊಳ್ಳಿರಿ. ನಿಮ್ಮ ಅಸಹ್ಯವಾದವುಗಳನ್ನೆಲ್ಲಾ ಬಿಟ್ಟು, ನಿಮ್ಮ ಮುಖಗಳನ್ನು ತಿರುಗಿಸಿರಿ.</verse>
				<verse number="7">“ ‘ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಇಸ್ರಾಯೇಲಿನಲ್ಲಿ ನೆಲೆಸಿರುವ ವಿದೇಶಿಗಳಲ್ಲಾಗಲಿ, ಯಾವನಾದರೂ ನನ್ನಿಂದ ಅಗಲಿ ವಿಗ್ರಹಗಳನ್ನು ಹೃದಯದಲ್ಲಿ ನೆಲೆಗೊಳಿಸಿಕೊಂಡು ಪಾಪಕಾರಿಯಾದ ಆ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯ ಬಳಿಗೆ ಬಂದು, ಅವನ ಮೂಲಕ ದೈವೋತ್ತರವನ್ನು ಕೇಳಿಕೊಂಡರೆ, ಯೆಹೋವ ದೇವರಾದ ನಾನೇ ಉತ್ತರಕೊಡುವೆನು.</verse>
				<verse number="8">ನಾನು ಅಂಥವನ ಮೇಲೆ ಬಹುಕೋಪಗೊಂಡು, ಅವನನ್ನು ಗುರುತನ್ನಾಗಿಯೂ, ಗಾದೆಯನ್ನಾಗಿಯೂ ಮಾಡಿ, ನನ್ನ ಜನರ ಮಧ್ಯದೊಳಗಿಂದ ತೆಗೆದುಬಿಡುವೆನು. ಹೀಗೆ ನಾನೇ ಯೆಹೋವ ದೇವರು ಎಂದು ನಿಮಗೆ ಗೊತ್ತಾಗುವುದು.</verse>
				<verse number="9">“ ‘ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ, ಯೆಹೋವ ದೇವರಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ. ನಾನು ನನ್ನ ಕೈಯನ್ನು ಅವನ ವಿರುದ್ಧವಾಗಿ ಚಾಚಿ, ನನ್ನ ಜನರಾದ ಇಸ್ರಾಯೇಲರ ಮಧ್ಯದೊಳಗಿಂದ ಅವನನ್ನು ನಾಶಪಡಿಸುವೆನು.</verse>
				<verse number="10">ಅವರು ತಮ್ಮ ಅಕ್ರಮದ ದಂಡನೆಯನ್ನು ಹೊರುವರು. ವಿಚಾರಿಸುವವನ ದಂಡನೆಯು ಹೇಗೆಯೋ ಹಾಗೆಯೇ, ಪ್ರವಾದಿಗೆ ದಂಡನೆಯೂ ಇರುವುದು.</verse>
				<verse number="11">ಇಸ್ರಾಯೇಲಿನ ಮನೆತನದವರು ಇನ್ನು ಮೇಲೆ ನನ್ನನ್ನು ಬಿಟ್ಟು ತಿರುಗದೇ, ತಮ್ಮ ಎಲ್ಲಾ ದ್ರೋಹಗಳಿಂದ ಅಶುದ್ಧರಾಗದೆ ಇರುವುದರಿಂದ ಅವರು ನನ್ನ ಜನರಾಗಿರುವರು, ಅವರಿಗೆ ನಾನು ದೇವರಾಗಿರುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”</verse>
				<verse number="12">ಯೆಹೋವ ದೇವರ ವಾಕ್ಯವು ನನಗೆ ಬಂದಿತು:</verse>
				<verse number="13">“ಮನುಷ್ಯಪುತ್ರನೇ, ದೇಶವು ದೊಡ್ಡ ಅಪರಾಧದಿಂದ ನನಗೆ ವಿರುದ್ಧವಾಗಿ ಪಾಪಮಾಡಿದೆ, ನಾನು ಅದರ ಮೇಲೆ ನನ್ನ ಕೈಚಾಚಿ, ಅದರ ಜೀವನಾಧಾರವನ್ನು ತೆಗೆದುಹಾಕಿ, ಕ್ಷಾಮವು ಬರುವ ಹಾಗೆ ಮಾಡುವೆನು. ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ಕಡಿದುಬಿಡುವೆನು.</verse>
				<verse number="14">ನೋಹನೂ ದಾನಿಯೇಲನೂ ಯೋಬನೂ ಎಂಬ ಈ ಮೂವರು ಅದರಲ್ಲಿದ್ದರೂ ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರವೇ ಉಳಿಸಿಕೊಳ್ಳುತ್ತಿದ್ದರು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="15">“ನಾನು ದುಷ್ಟಮೃಗಗಳನ್ನು ದೇಶದಲ್ಲಿ ಹಾದುಹೋಗುವಂತೆ ಮಾಡಿ, ಅದನ್ನು ನಿರ್ಜನಪಡಿಸಿ, ಹಾಳು ಮಾಡಿ, ಯಾರೂ ಮೃಗಗಳ ನಿಮಿತ್ತ ಹಾದುಹೋಗದಂತೆ ಮಾಡಿದರೆ,</verse>
				<verse number="16">ಈ ಮೂರು ಮನುಷ್ಯರಲ್ಲಿ ಅದರಲ್ಲಿ ಇದ್ದರೂ, ನನ್ನ ಜೀವದಾಣೆ ಅವರು ಪುತ್ರರನ್ನಾಗಲಿ, ಪುತ್ರಿಯರನ್ನಾಗಲಿ ಬಿಡಿಸಲು ಆಗುತ್ತಿರಲಿಲ್ಲ, ತಾವು ಮಾತ್ರ ತಪ್ಪಿಸಿಕೊಳ್ಳುವರು. ಆದರೆ ದೇಶವು ಹಾಳಾಗುವುದು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="17">“ಇಲ್ಲವೆ ನಾನು ಆ ದೇಶದ ಮೇಲೆ ಖಡ್ಗವನ್ನು ತರಿಸಿ, ‘ಖಡ್ಗವೇ, ಆ ದೇಶದಲ್ಲಿ ಹಾದುಹೋಗು,’ ಎಂದು ಹೇಳಿ, ಅದು ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟಾಗ,</verse>
				<verse number="18">ಈ ಮೂವರು ಅದರಲ್ಲಿದ್ದರೂ, ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="19">“ನಾನು ಆ ದೇಶದ ಮೇಲೆ ವ್ಯಾಧಿಯನ್ನು ಕಳುಹಿಸಿ, ಮರಣದಂಡನೆಯಾಗಿ ಅದರ ಮೇಲೆ ನನ್ನ ರೋಷವನ್ನು ಸುರಿದು, ಮನುಷ್ಯರನ್ನೂ ಮೃಗಗಳನ್ನೂ ಅದರೊಳಗಿಂದ ತೆಗೆದುಹಾಕುವಾಗ,</verse>
				<verse number="20">ನೋಹನೂ, ದಾನಿಯೇಲನೂ, ಯೋಬನೂ ಅದರಲ್ಲಿದ್ದರೂ ನನ್ನ ಜೀವದಾಣೆ, ಅವರು ತಮ್ಮ ನೀತಿಯಿಂದ ತಮ್ಮ ಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಪುತ್ರಪುತ್ರಿಯರನ್ನು ಉಳಿಸಿಕೊಳ್ಳುತ್ತಿರಲಿಲ್ಲ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="21">“ನಾನು ಖಡ್ಗ, ಬರಗಾಲ ಕ್ಷಾಮ, ದುಷ್ಟಮೃಗ ವ್ಯಾಧಿಗಳೆಂಬ ನನ್ನ ನಾಲ್ಕು ಕಠಿಣವಾದ ನ್ಯಾಯತೀರ್ಪುಗಳನ್ನು ಯೆರೂಸಲೇಮಿನ ಮೇಲೆ ಕಳುಹಿಸಿ ಮನುಷ್ಯರನ್ನೂ, ಮೃಗಗಳನ್ನೂ ಕಡಿದು ಬಿಟ್ಟ ಮೇಲೆ ಮತ್ತೆ ಏನಾಗುವುದು?</verse>
				<verse number="22">ಆದರೂ ಅದರಲ್ಲಿ ಪುತ್ರಪುತ್ರಿಯರಲ್ಲಿ ಕೆಲವರು ಹೇಗೂ ತಪ್ಪಿಸಿಕೊಂಡು ಅಲ್ಲಿಂದ ಉಳಿದು ಒಯ್ಯಲಾಗುವರು. ಅವರು ನಿಮ್ಮ ಬಳಿಗೆ ಬಂದಾಗ, ನೀವು ಅವರ ದುರ್ಮಾರ್ಗ ದುಷ್ಕೃತ್ಯಗಳನ್ನು ಕಂಡು ನಾನು ಯೆರೂಸಲೇಮಿನ ಮೇಲೆ ತಂದ ಕೇಡಿನ ವಿಷಯವಾಗಿಯೂ ಸಮಾಧಾನ ಹೊಂದುವಿರಿ.</verse>
				<verse number="23">ನೀವು ಅವರ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಅದರೊಳಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”</verse>
			</chapter>
			<chapter number="15">
				<verse number="1">ಯೆಹೋವ ದೇವರ ವಾಕ್ಯವು ನನಗೆ ಬಂದಿತು,</verse>
				<verse number="2">“ಮನುಷ್ಯಪುತ್ರನೇ, ದ್ರಾಕ್ಷಿ ಗಿಡವು ಅಡವಿಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು?</verse>
				<verse number="3">ಇದರಿಂದ ಕಟ್ಟಿಗೆಯನ್ನು ತೆಗೆದುಕೊಂಡು ಯಾವ ಕೆಲಸವನ್ನಾದರೂ ಮಾಡುವರೋ ಅಥವಾ ಅದರ ಮೇಲೆ ಯಾವನನ್ನಾದರೂ ನೇತುಹಾಕುವುದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?</verse>
				<verse number="4">ಇದನ್ನು ಬೆಂಕಿಗೆ ಸೌದೆಯಾಗಿ ಹಾಕುತ್ತಾರೆ. ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡುತ್ತದೆ. ಅದರ ಮಧ್ಯ ಭಾಗವು ಸುಟ್ಟು ಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವುದೋ?</verse>
				<verse number="5">ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ, ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟುಹೋದ ಮೇಲೆ ಯಾವ ಕೆಲಸಕ್ಕೆ ಬಂದೀತು?”</verse>
				<verse number="6">“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ವನವೃಕ್ಷಗಳಲ್ಲಿ ದ್ರಾಕ್ಷಿಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಯಾಗಿ ಮಾಡಿರುವೆನೋ ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ವಿನಾಶಕ್ಕೆ ಗುರಿಮಾಡಿದ್ದೇನೆ.</verse>
				<verse number="7">ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಬೆಂಕಿಯೊಳಗಿಂದ ಹೊರಗೆ ಬಂದು ತಪ್ಪಿಸಿಕೊಂಡರೂ, ಮತ್ತೊಂದು ಬೆಂಕಿಯು ಅವರನ್ನು ದಹಿಸಿಬಿಡುವುದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ, ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.</verse>
				<verse number="8">ಅವರು ದ್ರೋಹ ಮಾಡಿದ್ದರಿಂದ ನಾನು ಆ ದೇಶವನ್ನು ಹಾಳುಮಾಡುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”</verse>
			</chapter>
			<chapter number="16">
				<verse number="1">ಯೆಹೋವ ದೇವರ ವಾಕ್ಯವು ನನಗೆ ಬಂದಿತು:</verse>
				<verse number="2">“ನರಪುತ್ರನೇ, ಯೆರೂಸಲೇಮಿಗೆ ಅದರ ಅಸಹ್ಯವಾದವುಗಳನ್ನು ತಿಳಿದುಕೊಳ್ಳುವ ಹಾಗೆ ಮಾಡಿ,</verse>
				<verse number="3">ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾರೆ: ನಿಮ್ಮ ಪೂರ್ವಜರು ಮತ್ತು ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ; ಅದೇ ನಿನ್ನ ಜನ್ಮಭೂಮಿ. ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.</verse>
				<verse number="4">ನಿನ್ನ ಹುಟ್ಟಿದ ಸ್ಥಳದ ವಿಷಯವು: ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸಲಾಗಲಿಲ್ಲ; ಶುದ್ಧವಾಗುವ ಹಾಗೆ ನೀರಿನಲ್ಲಿ ತೊಳೆಯಲಾಗಲಿಲ್ಲ; ನಿನಗೆ ಉಪ್ಪನ್ನು ಸ್ವಲ್ಪವೂ ಸವರಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ;</verse>
				<verse number="5">ನಿನ್ನನ್ನು ಕರುಣಿಸಿ, ಕಟಾಕ್ಷಿಸಿ ಯಾರೂ ನಿನಗೆ ಒಂದು ಸಹಾಯವನ್ನೂ ಮಾಡಲಿಲ್ಲ. ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಕಿದರು.</verse>
				<verse number="6">“ ‘ನಾನು ನಿನ್ನ ಬಳಿಯಲ್ಲಿ ಹಾದುಹೋಗುವಾಗ, ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದುದನ್ನು ನೋಡಿದಾಗ, “ಬದುಕು” ಎಂದೆನು.</verse>
				<verse number="7">ಹೊಲದಲ್ಲಿಯ ಮೊಳಕೆಯೋ ಎಂಬಂತೆ ನಾನು ನಿನ್ನನ್ನು ಬೆಳೆಸಲು, ನೀನು ಬಲಿತು, ಪ್ರಾಯವು ತುಂಬಿ, ನೀನು ಅತಿ ಸುಂದರಿಯಾದೆ, ನಿನ್ನ ಸ್ತನಗಳು ರೂಪಗೊಂಡವು, ನಿನ್ನ ಕೂದಲು ಬೆಳೆಯಿತು, ಮೊದಲು ನೀನು ಬರೀ ಬೆತ್ತಲೆಯಾಗಿದ್ದೆ.</verse>
				<verse number="8">“ ‘ಈಗ ನಾನು ನಿನ್ನ ಬಳಿ ಹಾದುಹೋಗುವಾಗ ನಿನ್ನನ್ನು ನೋಡಲು, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು. ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡಿದ್ದರಿಂದ ನೀನು ನನ್ನವಳಾದೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="9">“ ‘ಆಮೇಲೆ ನಿನ್ನನ್ನು ನೀರಿನಿಂದ ತೊಳೆದೆನು; ನಿನ್ನ ರಕ್ತವನ್ನು ನಿನ್ನಿಂದ ತೊಳೆದೆನು, ನಿನಗೆ ಎಣ್ಣೆಯಿಂದ ಅಭಿಷೇಕ ಮಾಡಿದೆನು.</verse>
				<verse number="10">ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲುಹಂದಿಯ ತೊಗಲಿನ ಪಾದರಕ್ಷೆಗಳನ್ನು ಕೊಟ್ಟೆನು. ನಯವಾದ ನಾರುಮಡಿಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು;</verse>
				<verse number="11">ಆಭರಣಗಳಿಂದ ನಿನ್ನನ್ನು ಅಲಂಕರಿಸಿದೆನು: ನಾನು ನಿನ್ನ ಕೈಗಳಿಗೆ ಕಡಗಗಳನ್ನು ನಿನ್ನ ಕೊರಳಿಗೆ ಸರವನ್ನು ಹಾಕಿದೆನು.</verse>
				<verse number="12">ನಿನ್ನ ಮೂಗಿಗೆ ಮೂಗುತಿಯನ್ನೂ, ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ, ನಿನ್ನ ತಲೆಯ ಮೇಲೆ ಸುಂದರ ಕಿರೀಟವನ್ನೂ ಇಟ್ಟೆನು.</verse>
				<verse number="13">ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ, ನಿನ್ನ ಆಹಾರವು ನಯವಾದ ಹಿಟ್ಟು, ಜೇನು, ಎಣ್ಣೆ ತಿನ್ನುತ್ತಿದ್ದೆ. ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.</verse>
				<verse number="14">ನಾನು ನಿನಗೆ ಅನುಗ್ರಹಿಸಿದ ನನ್ನ ವೈಭವದಿಂದ ನಿನ್ನ ಸೌಂದರ್ಯ ಪರಿಪೂರ್ಣವಾಯಿತು; ನಿನ್ನ ಚೆಲುವು ಜನಾಂಗಗಳಲ್ಲಿ ಪ್ರಸಿದ್ಧವಾಯಿತು, ಇದು ಸಾರ್ವಭೌಮ ಯೆಹೋವ ದೇವರ ನುಡಿ.</verse>
				<verse number="15">“ ‘ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸೆಯಿಟ್ಟು, ನಿನ್ನ ಕೀರ್ತಿಯ ನಿಮಿತ್ತವಾಗಿ ವೇಶ್ಯೆಯಾದೆ. ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ವ್ಯಭಿಚಾರ ಮಾಡಿದೆ ಮತ್ತು ನಿನ್ನ ಸೌಂದರ್ಯ ಅವನದಾಯಿತು.</verse>
				<verse number="16">ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾ ಸ್ಥಳದಲ್ಲಿ ವ್ಯಭಿಚಾರ ಮಾಡಿದೆ; ನೀನು ಅವನ ಬಳಿಗೆ ಹೋದೆ ಮತ್ತು ಅವನು ನಿನ್ನ ಸೌಂದರ್ಯವನ್ನು ತೆಗೆದುಕೊಂಡಿದ್ದಾನೆ.</verse>
				<verse number="17">ಇದಲ್ಲದೆ ನಾನು ನಿನಗೆ ಬೆಳ್ಳಿಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು, ಅವುಗಳಿಂದ ಪುರುಷಮೂರ್ತಿಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದೆ.</verse>
				<verse number="18">ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು, ಅವರಿಗೆ ಹೊದಿಸಿ, ನನ್ನ ಎಣ್ಣೆಯನ್ನೂ, ಧೂಪವನ್ನೂ ಅವರ ಮುಂದೆ ಇಟ್ಟೆ.</verse>
				<verse number="19">ನಾನು ನಿಮಗೆ ಒದಗಿಸಿದ ಆಹಾರ, ಹಿಟ್ಟು, ಎಣ್ಣೆ ಮತ್ತು ಜೇನುತುಪ್ಪವನ್ನು ನಾನು ನಿಮಗೆ ತಿನ್ನಲು ಕೊಟ್ಟಿದ್ದೇನೆ. ನೀವು ಅವರ ಮುಂದೆ ಪರಿಮಳಯುಕ್ತ ಧೂಪವನ್ನು ಅರ್ಪಿಸಿದ್ದೀರಿ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="20">“ ‘ಇದಾದ ಮೇಲೆ ನನಗೆ ಹುಟ್ಟಿದ ನನ್ನ ಪುತ್ರರನ್ನೂ, ಪುತ್ರಿಯರನ್ನೂ ವಿಗ್ರಹಗಳ ಆಹಾರಕ್ಕಾಗಿ ಯಜ್ಞವಾಗಿ ಅರ್ಪಿಸಿದೆ. ಈ ನಿನ್ನ ವ್ಯಭಿಚಾರ ಸಾಕಾಗಲಿಲ್ಲವೋ?</verse>
				<verse number="21">ನೀನು ನನ್ನ ಮಕ್ಕಳನ್ನು ಕೊಂದು, ವಿಗ್ರಹಗಳಿಗೆ ಬಲಿಯಾಗಿ ಅರ್ಪಿಸಿದೆ.</verse>
				<verse number="22">ಎಲ್ಲಾ ಅಸಹ್ಯ ಕಾರ್ಯಗಳನ್ನೂ, ವ್ಯಭಿಚಾರಗಳನ್ನೂ ಮಾಡುತ್ತಿದ್ದಾಗ, ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ, ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದುದನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.</verse>
				<verse number="23">“ ‘ನಿನಗೆ ಕಷ್ಟ! ಕಷ್ಟ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅವನ ಎಲ್ಲಾ ದುಷ್ಟತನದ ಹೊರತಾಗಿ,</verse>
				<verse number="24">ನೀವು ನಿಮಗಾಗಿ ಒಂದು ದಿಬ್ಬವನ್ನು ನಿರ್ಮಿಸಿದ್ದೀರಿ ಮತ್ತು ಪ್ರತಿ ಸಾರ್ವಜನಿಕ ಚೌಕದಲ್ಲಿ ಎತ್ತರದ ದೇವಾಲಯವನ್ನು ನಿರ್ಮಿಸಿದ್ದೀರಿ.</verse>
				<verse number="25">ಪ್ರತಿಯೊಂದು ದಾರಿಯ ಕೊನೆಯಲ್ಲಿಯೂ ಎತ್ತರದ ದೇವಾಲಯವನ್ನು ನಿರ್ಮಿಸಿ, ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು, ಹಾದುಹೋಗುವ ಪ್ರತಿಯೊಬ್ಬನಿಗೂ ನಿನ್ನ ಕಾಲುಗಳನ್ನು ಅಗಲಿಸಿದೆ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದೆ.</verse>
				<verse number="26">ಇದಲ್ಲದೆ ಅತಿಕಾಮಿಗಳಾದ ನಿನ್ನ ನೆರೆಯವರಾದ ಈಜಿಪ್ಟಿನವರ ಸಂಗಡ ವ್ಯಭಿಚಾರ ಮಾಡಿದೆ; ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದೆ;</verse>
				<verse number="27">ಆದ್ದರಿಂದ ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಭೂಪ್ರದೇಶವನ್ನು ಕಡಿಮೆ ಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು, ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಪುತ್ರಿಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.</verse>
				<verse number="28">ಇದಲ್ಲದೆ ಅಸ್ಸೀರಿಯರೊಂದಿಗೂ ವ್ಯಭಿಚಾರ ಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀಯೆ; ಆದರೂ ತೃಪ್ತಿಯಾಗಲಿಲ್ಲ.</verse>
				<verse number="29">ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ವ್ಯಾಪಾರಸ್ಥರಾದ ಬಾಬಿಲೋನಿಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ.</verse>
				<verse number="30">“ ‘ನೀನು ನಾಚಿಕೆಯಿಲ್ಲದ ವೇಶ್ಯೆಯಂತೆ ವರ್ತಿಸಿದಾಗ ನಾನು ಕೋಪದಿಂದ ತುಂಬಿದೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="31">ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ, ದಿಬ್ಬವನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು, ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿ ನೀನಲ್ಲ.</verse>
				<verse number="32">“ ‘ಆದರೆ ಗಂಡನಿಗೆ ಬದಲಾಗಿ ಪರರನ್ನು ಬಯಸುವ ವ್ಯಭಿಚಾರಿಯಾದ ಹೆಂಡತಿಯಾಗಿರುವೆ!</verse>
				<verse number="33">ಸಾಮಾನ್ಯವಾಗಿ ವ್ಯಭಿಚಾರಿಗಳಿಗೆ ಬಹುಮಾನ ಕೊಡುತ್ತಾರೆ. ಆದರೆ ನೀನೇ ನಿನ್ನ ಪ್ರಿಯರಿಗೆಲ್ಲ ಬಹುಮಾನಗಳನ್ನು ಕೊಟ್ಟು, ನಿನ್ನ ವ್ಯಭಿಚಾರಕ್ಕಾಗಿ ನಿನ್ನ ಬಳಿಗೆ ಬರುವ ಹಾಗೆ ಅವರಿಗೆ ಲಂಚ ಕೊಡುತ್ತಿರುವೆ.</verse>
				<verse number="34">ಹೀಗಿರುವುದರಿಂದ ನಿನ್ನ ವ್ಯಭಿಚಾರವು ಇತರ ವೇಶ್ಯೆಯರ ವ್ಯಭಿಚಾರಕ್ಕಿಂತ ಭಿನ್ನ. ವ್ಯಭಿಚಾರ ಮಾಡುವ ಹಾಗೆ ನಿನ್ನನ್ನು ಯಾರೂ ಹಿಂಬಾಲಿಸುವದಿಲ್ಲ. ನೀನು ಬಹುಮಾನ ಕೊಡುತ್ತೀಯೇ ಹೊರತು ನಿನಗೆ ಯಾರೂ ಬಹುಮಾನ ಕೊಡುವುದಿಲ್ಲ. ಆದ್ದರಿಂದ ನೀನು ಭಿನ್ನಳಾಗಿದ್ದು.</verse>
				<verse number="35">“ ‘ಆದಕಾರಣ ವ್ಯಭಿಚಾರಿಣಿಯೇ, ನೀನು ಯೆಹೋವ ದೇವರ ವಾಕ್ಯವನ್ನು ಕೇಳು.</verse>
				<verse number="36">ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನಿನ್ನ ಮೋಹವನ್ನು ಸುರಿಸಿದ ಕಾರಣದಿಂದಲೂ, ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ, ನಿನ್ನ ಅಸಹ್ಯ ವಿಗ್ರಹಗಳಿಂದಲೂ, ನೀನು ಆಹುತಿ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ,</verse>
				<verse number="37">ನೀನು ಆನಂದಪಟ್ಟ ನಿನ್ನ ಪ್ರಿಯರೆಲ್ಲರನ್ನು ಮತ್ತು ಹಗೆಮಾಡಿದವರೆಲ್ಲರನ್ನು ಸಹ ಕೂಡಿಸುವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ, ಅವರೆದುರಿಗೆ ನಿನ್ನನ್ನು ಬೆತ್ತಲೆ ಮಾಡಿ, ನಿನ್ನ ಮಾನವನ್ನು ಬಯಲು ಮಾಡುವೆ. ಆಗ ಅವರು ನಿನ್ನನ್ನು ಬೆತ್ತಲೆಯಾಗಿ ನೋಡುವರು.</verse>
				<verse number="38">ವ್ಯಭಿಚಾರ ಮಾಡಿದ ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ಮೇಲೆ ರಕ್ತ ಸುರಿಸುವೆನು.</verse>
				<verse number="39">ಅನಂತರ ನಿನ್ನನ್ನು ಅವರ ಕೈಗಳಿಗೆ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ, ನಿನ್ನ ಉನ್ನತ ಸ್ಥಾನಗಳನ್ನು ಒಡೆದು ಬಿಡುವರು. ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಆಭರಣಗಳನ್ನು ಕಸಿದುಕೊಂಡು, ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿಹೋಗುವರು.</verse>
				<verse number="40">ಅವರು ನಿನಗೆ ವಿರುದ್ಧವಾಗಿ ಒಂದು ಗುಂಪನ್ನು ಕರೆದುಕೊಂಡು ಬಂದು, ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಖಡ್ಗಗಳಿಂದ ನಿನ್ನನ್ನು ತಿವಿಯುವರು.</verse>
				<verse number="41">ಅವರು ನಿನ್ನ ಮನೆಗಳನ್ನು ಸುಟ್ಟು, ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯತೀರಿಸುವರು. ನೀನು ವ್ಯಭಿಚಾರ ಮಾಡುವುದನ್ನು ನಾನು ನಿಲ್ಲಿಸುವೆನು. ನೀನು ನಿನ್ನ ಪ್ರಿಯರಿಗೆ ಕೂಲಿ ಸಹ ಕೊಡುವುದನ್ನು ನಿಲ್ಲಿಸುವೆನು.</verse>
				<verse number="42">ಈ ರೀತಿ ನಿನ್ನ ಮೇಲಿನ ನನ್ನ ಸಿಟ್ಟನ್ನು ತೀರಿಸುವೆನು. ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ, ಶಾಂತನಾಗಿ ನಿನ್ನ ಮೇಲೆ ಕೋಪಗೊಳ್ಳುವುದಿಲ್ಲ.</verse>
				<verse number="43">“ ‘ನೀನು ನಿನ್ನ ಯೌವನದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ, ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿನ್ನ ಇತರ ಎಲ್ಲಾ ಅಸಹ್ಯವಾದವುಗಳ ಜೊತೆಗೆ, ಈ ಅಪವಿತ್ರತೆಯನ್ನು ನೀನು ಮಾಡಲಿಲ್ಲವೇ?</verse>
				<verse number="44">“ ‘ “ತಾಯಿಯಂತೆ ಮಗಳು,” ಎಂಬ ಗಾದೆಯನ್ನು ನಿನಗೆ ವಿರುದ್ಧವಾಗಿ ಪ್ರತಿಯೊಬ್ಬರು ಹೇಳುವರು.</verse>
				<verse number="45">ಗಂಡನಿಗೂ, ಮಕ್ಕಳಿಗೂ ಬೇಸರ ಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು. ಗಂಡನಿಗೂ, ಮಕ್ಕಳಿಗೂ ಬೇಸರ ಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ. ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.</verse>
				<verse number="46">ನಿನ್ನ ಉತ್ತರ ದಿಕ್ಕಿನಲ್ಲಿ ಪುತ್ರಿಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ. ದಕ್ಷಿಣ ದಿಕ್ಕಿನಲ್ಲಿ ಪುತ್ರಿಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.</verse>
				<verse number="47">ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ. ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ. ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.</verse>
				<verse number="48">ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು ಮತ್ತು ಅವಳ ಪುತ್ರಿಯರು; ನೀನು ನಿನ್ನ ಪುತ್ರಿಯರು ಮಾಡಿದೆ ಹಾಗೆ ಮಾಡಿಲಿಲ್ಲ.</verse>
				<verse number="49">“ ‘ಸೊದೋಮ್ ಎಂಬ ನಿನ್ನ ತಂಗಿಯ ಪಾಪವನ್ನು ನೋಡು; ಗರ್ವವ, ಅತಿ ಭೋಜನ, ಸ್ವಾರ್ಥತೆ; ಇವು ಆಕೆಯಲ್ಲಿಯೂ ಆಕೆಯ ಪುತ್ರಿಯರಲ್ಲಿಯೂ ಇದ್ದವು. ಆಕೆಯು ದೀನ ದರಿದ್ರರಿಗೆ ಸಹಾಯ ಮಾಡಲಿಲ್ಲ.</verse>
				<verse number="50">ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯವಾದವುಗಳನ್ನು ನಡೆಸಿದರು. ಆದ್ದರಿಂದ ನಾನು ಅದನ್ನು ನೋಡಿ, ಅವರನ್ನು ನಿರ್ಮೂಲ ಮಾಡಿದೆನು.</verse>
				<verse number="51">ಸಮಾರ್ಯವೆಂಬಾಕೆಯು ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದೆ. ನೀನು ಮಾಡಿದ ಲೆಕ್ಕವಿಲ್ಲದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.</verse>
				<verse number="52">ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆಪಡು. ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ. ಅವರು ನಿನಗಿಂತ ನೀತಿವಂತರು. ಹೌದು, ನೀನು ನಿನ್ನ ಸಹೋದರಿಯರನ್ನು ನೀತಿವಂತರೆಂದು ತೋರ್ಪಡಿಸಿದ್ದರಿಂದ ನೀನೇ ನಾಚಿಕೆಪಟ್ಟು, ನಿನ್ನ ನಿಂದೆಯನ್ನು ಹೊತ್ತುಕೋ.</verse>
				<verse number="53">“ ‘ಸೊದೋಮ್ ಮತ್ತು ಆಕೆಯ ಕುಮಾರಿಯರ ಹಾಗೂ ಸಮಾರ್ಯ ಮತ್ತು ಆಕೆಯ ಕುಮಾರಿಯ ಸೌಭಾಗ್ಯವನ್ನು ಪುನಃ ನೀಡುವೆನು. ಅದರೊಂದಿಗೆ ನಿನ್ನ ಸೌಭಾಗ್ಯವನ್ನೂ ಮರಳಿಸುವೆನು.</verse>
				<verse number="54">ಏಕೆಂದರೆ ನೀನು ನಿನ್ನ ನಿಂದೆಯನ್ನು ಹೊತ್ತುಕೊಂಡು, ಅವರನ್ನು ಆಧರಿಸುವಾಗ ಲಜ್ಜೆಪಡುವೆ, ನಾಚಿಕೆಗೊಳ್ಳುವೆ.</verse>
				<verse number="55">ಆಗ ಸಮಾರ್ಯ, ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ, ಅವರ ಪುತ್ರಿಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ, ನಿನ್ನ ಪುತ್ರಿಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ.</verse>
				<verse number="56">ನಿನ್ನ ಸಹೋದರಿಯರಾದ ಸೊದೋಮನ್ನು ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲಿಲ್ಲ.</verse>
				<verse number="57">ಅರಾಮಿನ ಪುತ್ರಿಯರಿಂದಲೂ ಮತ್ತು ಅದರ ಸುತ್ತಲಿರುವಂತ ಎಲ್ಲವುಗಳಿಂದಲೂ ಮತ್ತು ನಿನ್ನನ್ನು ಉದಾಸೀನ ಮಾಡಿದಂಥ ಎಲ್ಲಾ ಫಿಲಿಷ್ಟಿಯರ ಪುತ್ರಿಯರಿಂದಲೂ, ನಿನಗೆ ನಿಂದೆಯು ಬಂದ ಹಾಗೆ ನಿನ್ನ ಕೆಟ್ಟತನವು ಪ್ರಕಟವಾಗುವುದಕ್ಕೆ ಪೂರ್ವದಲ್ಲಿಯೇ</verse>
				<verse number="58">ನೀನು ನಿನ್ನ ದುಷ್ಕರ್ಮಗಳ ಮತ್ತು ನಿನ್ನ ಅಸಹ್ಯಗಳ ಫಲವನ್ನು ಅನುಭವಿಸಬೇಕಾಗಿ ಬಂತು, ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="59">“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ. ನೀನು ಒಡಂಬಡಿಕೆಯನ್ನು ಮೀರಿ, ನನ್ನ ಆಣೆಯನ್ನು ತಿರಸ್ಕರಿಸಿರುವೆ.</verse>
				<verse number="60">ಆದರೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ನಿನಗಾಗಿ ನಿತ್ಯವಾದ ಒಡಂಬಡಿಕೆಯೊಂದನ್ನು ಸ್ಥಾಪಿಸುವೆನು.</verse>
				<verse number="61">ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು, ನಿನ್ನ ಸಹೋದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವೆ. ಅವರನ್ನು ನಿನ್ನ ಪುತ್ರಿಯರಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆಯಿಂದಲ್ಲ.</verse>
				<verse number="62">ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು. ಆದ್ದರಿಂದ ನಾನೇ ಯೆಹೋವ ದೇವರೆಂದು ನಿಮಗೆ ಗೊತ್ತಾಗುವುದು.</verse>
				<verse number="63">ಆಗ ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದುಕೊಂಡು, ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದು ಎಂದು ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”</verse>
			</chapter>
			<chapter number="17">
				<verse number="1">ಯೆಹೋವ ದೇವರ ವಾಕ್ಯವು ನನಗೆ ಬಂದಿತು,</verse>
				<verse number="2">“ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರಿಗೆ ಸಾಮ್ಯಗಳನ್ನು ಒಗಟಾಗಿ ಹೇಳು.</verse>
				<verse number="3">ಅವರಿಗೆ ಹೇಳತಕ್ಕದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಶಕ್ತಿಶಾಲಿ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ಮತ್ತು ವಿಧವಿಧವಾದ ಬಣ್ಣಬಣ್ಣದ ಪುಕ್ಕಗಳಿಂದ ತುಂಬಿದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಕೊಂಬೆಯನ್ನು ಹಿಡಿದು,</verse>
				<verse number="4">ಅದರ ಚಿಗುರುಗಳ ಕೊನೆಯನ್ನು ಕಿತ್ತು, ವ್ಯಾಪಾರದ ದೇಶಕ್ಕೆ ತೆಗೆದುಕೊಂಡುಹೋಗಿ ವರ್ತಕರಿರುವ ನಗರದಲ್ಲಿ ಇಟ್ಟಿತು.</verse>
				<verse number="5">“ ‘ಅದು ದೇಶದ ಬೀಜವನ್ನೂ ಸಹ ತೆಗೆದುಕೊಂಡುಹೋಗಿ ಫಲವತ್ತಾದ ಭೂಮಿಯಲ್ಲಿ ಇರಿಸಿತು. ಅದು ಹೆಚ್ಚು ನೀರಿರುವ ಸ್ಥಳದಲ್ಲಿ ಅದನ್ನು ನೆಟ್ಟು ನೀರವಂಜಿಯ ಮರದ ಹಾಗೆ ಬೆಳೆಯಿತು.</verse>
				<verse number="6">ಅದು ಮೊಳೆತು ತಗ್ಗಾದ ಪ್ರಮಾಣದಲ್ಲಿ ಹಬ್ಬುವ ದ್ರಾಕ್ಷಿಗಿಡವಾಯಿತು. ಅದರ ರೆಂಬೆಗಳು ಅವನ ಕಡೆಗೆ ತಿರುಗಿಕೊಂಡವು. ಅದರ ಬೇರುಗಳು ಅದರ ಕೆಳಗಿದ್ದವು. ಹೀಗೆ ಅದು ದ್ರಾಕ್ಷಿಗಿಡವಾಯಿತು. ಕೊಂಬೆಗಳು ಹುಟ್ಟಿಕೊಂಡು ಬಳ್ಳಿಗಳು ಹಬ್ಬಿದವು.</verse>
				<verse number="7">“ ‘ಶಕ್ತಿಶಾಲಿ ರೆಕ್ಕೆಗಳೂ, ಬಹಳ ಗರಿಗಳೂ ಇದ್ದ ಇನ್ನೊಂದು ದೊಡ್ಡ ಹದ್ದು ಇತ್ತು. ಆಗ ಆ ದ್ರಾಕ್ಷಿ ಗಿಡವು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅವನ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅವನ ಮೂಲಕ ನೀರನ್ನು ಪಡೆಯುತ್ತಿತ್ತು.</verse>
				<verse number="8">ಅದು ಕೊಂಬೆಗಳನ್ನು ಬೆಳೆಸಿ ಫಲಕೊಡುವ ಹಾಗೆಯೂ, ಒಳ್ಳೆಯ ದ್ರಾಕ್ಷಿಗಿಡ ಆಗುವ ಹಾಗೆಯೂ, ಒಳ್ಳೆಯ ಭೂಮಿಯಲ್ಲಿ ಹೆಚ್ಚು ನೀರಿನ ಬಳಿಯಲ್ಲಿ ಬೆಳೆಸಲಾಗಿತ್ತು.’</verse>
				<verse number="9">“ಅವರಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದು ಸಮೃದ್ಧಿಯಾಗಿರುವುದೋ? ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ, ಅದು ಒಣಗುವುದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿ ಹೋದಾಗ, ಅದನ್ನು ಬೇರುಸಹಿತ ಕೀಳಬೇಕಾದರೆ ಮಹಾಬಲವಾಗಲಿ ಅಥವಾ ಬಹಳ ಜನರಾಗಲಿ ಇರಬೇಕಿಲ್ಲ.</verse>
				<verse number="10">ಹೌದು, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವುದೇ? ಅದಕ್ಕೆ ಪೂರ್ವದಿಕ್ಕಿನ ಗಾಳಿ ಬಡಿಯುವಾಗ ಅದು ಸಂಪೂರ್ಣವಾಗಿ ಒಣಗುವುದಿಲ್ಲವೇ? ಅದು ಮೊಳೆತ ಪಾತಿಗಳಲ್ಲಿಯೇ ಒಣಗಿ ಹೋಗುವುದಿಲ್ಲವೇ?’ ”</verse>
				<verse number="11">ಯೆಹೋವ ದೇವರ ವಾಕ್ಯವು ನನಗೆ ಬಂದಿತು,</verse>
				<verse number="12">“ ‘ಇದರ ಅಭಿಪ್ರಾಯ ನಿಮಗೆ ತಿಳಿಯುವುದಿಲ್ಲವೋ?’ ಎಂದು ತಿರುಗಿಬೀಳುವ ಮನೆಯವರಿಗೆ ಹೇಳು ಮತ್ತು ಅವರಿಗೆ, ‘ಇಗೋ, ಬಾಬಿಲೋನಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸನನ್ನೂ, ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಒಯ್ದಿದ್ದಾನೆ.</verse>
				<verse number="13">ಅರಸನ ಸಂತಾನದವರನ್ನು ಕರೆದುಕೊಂಡು ಅವರ ಸಂಗಡ ಒಡಂಬಡಿಕೆ ಮಾಡಿ, ಅವನಿಂದ ಪ್ರಮಾಣ ಮಾಡಿಸಿ, ದೇಶದ ಬಲಿಷ್ಠರನ್ನು ತೆಗೆದುಕೊಂಡು ಹೋಗಿದ್ದಾನೆ.</verse>
				<verse number="14">ಆ ರಾಜ್ಯವು ಮೇಲೇಳದ ಹಾಗಿದ್ದರೂ, ಅವನು ಒಡಂಬಡಿಕೆಯನ್ನು ಕೈಗೊಳ್ಳುವುದರಿಂದ ಅದು ನಿಲ್ಲುವುದು.</verse>
				<verse number="15">ಆದರೆ ಅರಸನು ಅವನಿಗೆ ವಿರುದ್ಧವಾಗಿ ತಿರುಗಿಬಿದ್ದು, ತನ್ನ ರಾಯಭಾರಿಗಳನ್ನು ಈಜಿಪ್ಟಿಗೆ ಕಳುಹಿಸಿ, ತನಗೆ ಕುದುರೆಗಳನ್ನೂ, ಬಹಳ ಜನರನ್ನೂ ಕೊಡಬೇಕೆಂದು ಹೇಳಿ ಕಳುಹಿಸಿದನು. ಇವನು ಅಭಿವೃದ್ಧಿಯಾಗುವನೋ? ಇಂತಹ ಸಂಗತಿಗಳನ್ನು ಮಾಡುವವನು ತಪ್ಪಿಸಿಕೊಳ್ಳುವನೋ ಅಥವಾ ಒಡಂಬಡಿಕೆಯನ್ನು ಮುರಿದು ತಪ್ಪಿಸಿಕೊಳ್ಳಲಾಗುವುದೋ?</verse>
				<verse number="16">“ ‘ನಿಶ್ಚಯವಾಗಿ ಯಾವನಿಂದ ಅರಸನಾಗಿ ಆಯ್ಕೆಗೊಂಡನೋ ಎಂದರೆ ಯಾವನ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಡಂಬಡಿಕೆಯನ್ನು ಮೀರಿದನೋ, ನನ್ನ ಜೀವದಾಣೆ ಅವನು ಇರುವಲ್ಲಿಯೇ ಬಾಬಿಲೋನಿನ ಮಧ್ಯದಲ್ಲಿ ಇವನು ಸಾಯುವನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="17">ಫರೋಹನೂ, ಅವನ ಮಹಾಸೈನ್ಯವೂ, ದೊಡ್ಡ ಪರಿವಾರವೂ ಬಂದು ಬಹಳ ಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನೂ, ಕೋಟೆಗಳನ್ನೂ ಕಟ್ಟಿದರೂ ಯುದ್ಧದಲ್ಲಿ ಅವನಿಗೆ ಏನೂ ಪ್ರಯೋಜನವಾಗುವುದಿಲ್ಲ.</verse>
				<verse number="18">ಅವನು ಒಡಂಬಡಿಕೆಯನ್ನು ಮುರಿದು, ಪ್ರಮಾಣ ವಚನವನ್ನು ತಿರಸ್ಕರಿಸಿದನು. ಅವನು ಒಡಂಬಡಿಕೆಯಲ್ಲಿ ತನ್ನ ಹಸ್ತವನ್ನಿಟ್ಟಿದ್ದರೂ ಈ ಎಲ್ಲಾ ಸಂಗತಿಗಳನ್ನು ಮಾಡಿದ್ದರಿಂದ ಅವನು ತಪ್ಪಿಸಿಕೊಳ್ಳಲಾರನು.</verse>
				<verse number="19">“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ ನಿಶ್ಚಯವಾಗಿ ಅವನು ತಿರಸ್ಕರಿಸಿದ ನನ್ನ ಪ್ರಮಾಣವನ್ನೂ, ಅವನು ಮೀರಿದ ಒಡಂಬಡಿಕೆಯನ್ನೂ ಅವನ ತಲೆಯ ಮೇಲೆಯೇ ಹೊರಿಸುವೆನು.</verse>
				<verse number="20">ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ. ಆಗ ಅವನು ನನ್ನ ಉರುಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಬಾಬಿಲೋನಿಗೆ ಕರೆತಂದಿದ್ದೇನೆ ಮತ್ತು ಅವನು ನನಗೆ ನಂಬಿಕೆದ್ರೋಹ ಮಾಡಿದ ಕಾರಣ ಅಲ್ಲಿ ಅವನಿಗೆ ನ್ಯಾಯತೀರ್ಪು ವಿಧಿಸುತ್ತೇನೆ.</verse>
				<verse number="21">ಅವನ ಸೈನ್ಯಗಳೆಲ್ಲಾ ಖಡ್ಗದಿಂದ ಬೀಳುವುದು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಹೋಗುವರು. ಆಗ ಯೆಹೋವ ದೇವರಾದ ನಾನೇ ಅದನ್ನು ಹೇಳಿದೆನೆಂದು ನಿಮಗೆ ತಿಳಿಯುವುದು.</verse>
				<verse number="22">“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು. ಇದರ ತುದಿಯಲ್ಲಿರುವ ಎಳೆಯದಾದ ಕೊಂಬೆಯನ್ನು ಕತ್ತರಿಸಿ, ಎತ್ತರವಾದ ಪರ್ವತದ ಮೇಲೆ ನಾಟುವೆನು.</verse>
				<verse number="23">ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು. ಅದು ಕೊಂಬೆಗಳಲ್ಲಿ ಹುಟ್ಟಿಕೊಂಡು ಫಲಫಲಿಸುವುದು; ಸೊಂಪಾದ ದೇವದಾರು ಆಗುವುದು. ರೆಕ್ಕೆಗಳುಳ್ಳ ಪ್ರತಿಯೊಂದು ಪಕ್ಷಿಗಳೂ, ಅದರ ಕೊಂಬೆಗಳ ನೆರಳಿನ ಕೆಳಗೆ ವಾಸಮಾಡುವುವು.</verse>
				<verse number="24">ಯೆಹೋವ ದೇವರಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾದದ್ದನ್ನು ಎತ್ತರ ಪಡಿಸಿ, ಹಸುರಾಗಿರುವುದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ, ಎಂದು ಅರಣ್ಯದ ಸಕಲ ವೃಕ್ಷಗಳು ತಿಳಿಯುವುದು. “ ‘ಯೆಹೋವ ದೇವರಾದ ನಾನೇ ಮಾತನಾಡಿ, ಅದನ್ನು ನಡೆಸಿದ್ದೇನೆ.’ ”</verse>
			</chapter>
			<chapter number="18">
				<verse number="1">ಯೆಹೋವ ದೇವರ ವಾಕ್ಯವು ನನಗೆ ಬಂದಿತು:</verse>
				<verse number="2">“ನೀವು ಇಸ್ರಾಯೇಲ್ ದೇಶದ ವಿಷಯವಾಗಿ ಈ ಗಾದೆಯನ್ನು ಉಲ್ಲೇಖಿಸುವುದರ ಅರ್ಥವೇನು: “ ‘ಪಿತೃಗಳು ಹುಳಿದ್ರಾಕ್ಷಿಗಳನ್ನು ತಿಂದರು, ಮಕ್ಕಳ ಹಲ್ಲು ಚಳಿತು ಹೋಯಿತು.’</verse>
				<verse number="3">“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಹೇಳುವ ಸಂದರ್ಭವು ಇರುವುದಿಲ್ಲ.</verse>
				<verse number="4">ಎಲ್ಲಾ ಪ್ರಾಣಗಳು ನನ್ನವೇ, ತಂದೆಯ ಪ್ರಾಣವು ಹೇಗೋ ಹಾಗೆಯೇ ಮಗನ ಪ್ರಾಣವು ನನ್ನದೇ. ಪಾಪ ಮಾಡುವವನೇ ಸಾಯುವನು.</verse>
				<verse number="5">“ಆದರೆ ಒಬ್ಬ ಮನುಷ್ಯನು ನೀತಿವಂತನಾಗಿದ್ದು, ನೀತಿಯನ್ನೂ ನ್ಯಾಯವನ್ನೂ ನಡೆಸಿ,</verse>
				<verse number="6">ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನದೆ, ಇಸ್ರಾಯೇಲಿನ ಮನೆತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾಗಿರುವ ಸ್ತ್ರೀಯನ್ನು ಸಮೀಪಿಸದೆ,</verse>
				<verse number="7">ಯಾರನ್ನೂ ಉಪದ್ರವಪಡಿಸದೆ, ಸಾಲ ಮಾಡಿದವನ ಒತ್ತೆಯನ್ನು ಹಿಂದಕ್ಕೆ ಕೊಟ್ಟು, ಹಿಂಸೆ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆಯಿರುವವನಿಗೆ ಬಟ್ಟೆಯನ್ನು ಹೊದಿಸಿ,</verse>
				<verse number="8">ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯದಿಂದ ತನ್ನ ಕೈಯನ್ನು ಹಿಂತೆಗೆದು ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,</verse>
				<verse number="9">ಸತ್ಯವನ್ನು ನಡೆಸುವುದಕ್ಕಾಗಿ ನನ್ನ ನಿಯಮಗಳಲ್ಲಿ ನಡೆದು, ನನ್ನ ನ್ಯಾಯಗಳನ್ನು ಕೈಗೊಂಡು ಸತ್ಯಪರನಾಗಿ ನಡೆದರೆ, ಅವನು ನೀತಿವಂತನು ಮತ್ತು ನಿಶ್ಚಯವಾಗಿ ಬದುಕುವನು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ.</verse>
				<verse number="10">“ಒಂದು ವೇಳೆ ಇಂಥವನು ಪಡೆದ ಮಗನು, ಈಗ ಹೇಳಿದ ದುಷ್ಕೃತ್ಯಗಳಲ್ಲಿ ಯಾವುದನ್ನಾದರೂ ನಡೆಸಿ,</verse>
				<verse number="11">ಸುಕೃತ್ಯಗಳಲ್ಲಿ ಯಾವುದನ್ನೂ ನಡೆಸದೆ, “ಪರ್ವತಗಳ ಪೂಜಾಸ್ಥಳಗಳಲ್ಲಿ ತಿಂದು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿ,</verse>
				<verse number="12">ಬಡವರನ್ನೂ, ದರಿದ್ರರನ್ನೂ ಉಪದ್ರವಗೊಳಿಸಿ, ಹಿಂಸಿಸಿ, ಸುಲಿಗೆ ಮಾಡಿ, ಒತ್ತೆಗಳನ್ನು ಹಿಂದೆ ಕೊಡದೆ, ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತಿ ಅಸಹ್ಯವಾದವುಗಳನ್ನು ಮಾಡಿ,</verse>
				<verse number="13">ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭ ಪಡೆಯುವವನು ಆಗಿದ್ದರೆ, ಅವನು ಬದುಕುವನೋ? ಅವನು ಬದುಕುವುದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿದ್ದರಿಂದ ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.</verse>
				<verse number="14">“ಒಂದು ವೇಳೆ ಇವನು ಪಡೆದ ಮಗನು ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ಕಂಡು ಆಲೋಚಿಸಿ, ಇಂಥಾ ಕಾರ್ಯಗಳನ್ನು ನಡೆಸದೆ,</verse>
				<verse number="15">“ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನದೆ, ಇಸ್ರಾಯೇಲಿನ ಮನೆತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ,</verse>
				<verse number="16">ಯಾರನ್ನೂ ಹಿಂಸಿಸದೆ, ಒತ್ತೆಯನ್ನು ಕೇಳದೆ, ಹಿಂಸೆಯಿಂದ ಸುಲಿಗೆ ಮಾಡದೆ, ಹಸಿದವನಿಗೆ ತನ್ನ ರೊಟ್ಟಿಯನ್ನು ಕೊಟ್ಟು ಮತ್ತು ಬೆತ್ತಲೆಯಾದವನಿಗೆ ವಸ್ತ್ರವನ್ನು ಹೊದಿಸಿ,</verse>
				<verse number="17">ತನ್ನ ಕೈಯನ್ನು ಪಾಪ ಮಾಡುವುದರಿಂದ ಹಿಂತೆಗೆದು ಬಡ್ಡಿಯನ್ನೂ, ಲಾಭವನ್ನೂ ತೆಗೆದುಕೊಳ್ಳದೆ, ನನ್ನ ವಿಧಿಗಳನ್ನು ಪಾಲಿಸಿ, ನನ್ನ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವುದಿಲ್ಲ, ಅವನು ನಿಶ್ಚಯವಾಗಿ ಬದುಕುವನು.</verse>
				<verse number="18">ಇವನ ತಂದೆಯಾದರೊ ಸ್ವಜನರನ್ನು ಬಲಾತ್ಕಾರ ಮಾಡಿದ್ದರಿಂದಲೂ, ತನ್ನ ಸಹೋದರನನ್ನು ಹಿಂಸಿಸಿ ಸುಲಿಗೆ ಮಾಡಿದ್ದರಿಂದಲೂ, ತನ್ನ ಜನರ ಮಧ್ಯದಲ್ಲಿ ಕೆಟ್ಟದ್ದನ್ನು ಮಾಡಿದ್ದರಿಂದಲೂ ಅವನು ತನ್ನ ಅಕ್ರಮದಲ್ಲಿ ಸಾಯುವನು.</verse>
				<verse number="19">“ಆದರೂ ಇನ್ನೂ ನೀವು ಹೇಳುವುದೇನು? ‘ಮಗನು ತಂದೆಯ ಅಕ್ರಮವನ್ನು ಹೊರುವುದಿಲ್ಲವೇ?’ ಎಂದು ಹೇಳುವಿರಿ. ಮಗನು ನ್ಯಾಯವನ್ನೂ, ನೀತಿಯನ್ನೂ ಮಾಡಿ, ನನ್ನ ನಿಯಮಗಳನ್ನೆಲ್ಲಾ ಕೈಗೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು.</verse>
				<verse number="20">ಪಾಪ ಮಾಡುವವನೇ ಸಾಯುವನು. ಮಗನು ತಂದೆಯ ಅಕ್ರಮವನ್ನು ಹೊರುವುದಿಲ್ಲ; ನೀತಿವಂತನ ನೀತಿಯು ಅವನ ಮೇಲೆಯೇ ಇರುವುದು; ದುಷ್ಟನ ದುಷ್ಟತನವು ಅವನ ಮೇಲೆಯೇ ಇರುವುದು.</verse>
				<verse number="21">“ದುಷ್ಟನು ತಾನು ಮಾಡಿದ ಪಾಪಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು, ನನ್ನ ನಿಯಮಗಳನ್ನೆಲ್ಲಾ ಕೈಗೊಂಡು, ನ್ಯಾಯವನ್ನೂ, ನೀತಿಯನ್ನೂ ನಡೆಸಿದರೆ, ಅವನು ಸಾಯದೆ ಖಂಡಿತವಾಗಿ ಬದುಕುವನು.</verse>
				<verse number="22">ಅವನು ಮಾಡಿದ ಪಾಪಗಳಲ್ಲಿ ಒಂದಾದರೂ ಅವನ ಲೆಕ್ಕಕ್ಕೆ ಸೇರಿಸಲಾಗುವುದಿಲ್ಲ. ಅವನು ಮಾಡಿದ ನೀತಿಯಿಂದಲೇ ಅವನು ಬದುಕುವನು.</verse>
				<verse number="23">ದುಷ್ಟನು ಸಾಯುವುದರಲ್ಲಿ ನನಗೆ ಸ್ವಲ್ಪ ಸಂತೋಷವಿರುವುದೋ?” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾನೆ. “ಅವನು ತನ್ನ ದುರ್ಮಾರ್ಗಗಳನ್ನು ಬಿಟ್ಟು ಬದುಕಿದರೆ ನನಗೆ ಸಂತೋಷವಲ್ಲವೇ?</verse>
				<verse number="24">“ಆದರೆ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡಿ, ದುಷ್ಟನು ಮಾಡುವ ಎಲ್ಲಾ ಅಸಹ್ಯವಾದವುಗಳ ಹಾಗೆ ಮಾಡಿದರೆ ಅವನು ಬದುಕುವನೇ? ಅವನು ಮಾಡಿರುವ ಎಲ್ಲಾ ಸುಕೃತ್ಯಗಳು ಅವನ ಲೆಕ್ಕಕ್ಕೆ ಸೇರುವುದಿಲ್ಲ. ಅವನು ಮಾಡಿರುವ ಅಪರಾಧದಿಂದಲೂ, ಪಾಪದಿಂದಲೂ ಅವುಗಳಲ್ಲಿಯೇ ಅವನು ಸಾಯುವನು.</verse>
				<verse number="25">“ಆದರೆ ನೀವು, ‘ಯೆಹೋವ ದೇವರ ಮಾರ್ಗವು ಸರಿಯಲ್ಲ’ ಎಂದು ಹೇಳುತ್ತೀರಿ. ಇಸ್ರಾಯೇಲ್ ಜನರೇ, ಈಗ ಕೇಳಿರಿ, ನನ್ನ ಮಾರ್ಗವು ಸರಿಯಲ್ಲವೇ? ನಿಜಕ್ಕೂ ನಿಮ್ಮ ಮಾರ್ಗಗಳೇ ಸರಿಯಲ್ಲ.</verse>
				<verse number="26">ಒಬ್ಬ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಪಾಪವನ್ನು ಮಾಡಿದರೆ, ಅವನು ಅದಕ್ಕಾಗಿ ಸಾಯಬೇಕು; ಹೌದು, ಅವನು ಮಾಡಿದ ಪಾಪದಿಂದಲೇ ಅವನು ಸಾಯಬೇಕು.</verse>
				<verse number="27">ಒಬ್ಬ ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯವನ್ನು ಅನುಸರಿಸಿದರೆ, ಅವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.</verse>
				<verse number="28">ಏಕೆಂದರೆ ಅವನು ತಾನು ಮಾಡಿದ ದುಷ್ಕೃತ್ಯಗಳನ್ನು ಯೋಚಿಸಿ, ಅವುಗಳನ್ನು ಬಿಟ್ಟು ತಿರುಗಿಕೊಳ್ಳುವುದರಿಂದ ಸಾಯದೆ ನಿಶ್ಚಯವಾಗಿ ಬದುಕುವನು.</verse>
				<verse number="29">ಆದರೆ ಇಸ್ರಾಯೇಲ್ ಜನರು, ‘ಯೆಹೋವ ದೇವರ ಮಾರ್ಗ ನೀತಿಯುಕ್ತವಲ್ಲ,’ ಎನ್ನುತ್ತಾರೆ. ಇಸ್ರಾಯೇಲ್ ಜನರೇ, ನನ್ನ ಮಾರ್ಗ ಸರಿಯಲ್ಲವೇ? ನಿಮ್ಮ ಮಾರ್ಗಗಳು ಅನೀತಿಯ ಮಾರ್ಗಗಳಲ್ಲವೇ?</verse>
				<verse number="30">“ಆದ್ದರಿಂದ ಇಸ್ರಾಯೇಲ್ ಜನರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ಪ್ರತಿಯೊಬ್ಬನಿಗೆ ನ್ಯಾಯತೀರಿಸುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿಮ್ಮ ದುಷ್ಟತನಗಳನ್ನೆಲ್ಲಾ ಬಿಟ್ಟು ತಿರುಗಿಕೊಳ್ಳಿರಿ. ಆಗ ಪಾಪವು ನಿಮ್ಮ ಪತನಕ್ಕೆ ಕಾರಣವಾಗುವುದಿಲ್ಲ.</verse>
				<verse number="31">ನೀವು ಮಾಡುವ ದುಷ್ಕೃತ್ಯಗಳನ್ನೆಲ್ಲಾ ನಿಮ್ಮಿಂದ ಎಸೆದುಬಿಡಿರಿ. ಹೊಸ ಹೃದಯವನ್ನೂ, ಹೊಸ ಆತ್ಮವನ್ನೂ ನೀವು ಪಡೆದುಕೊಳ್ಳಿರಿ. ಇಸ್ರಾಯೇಲಿನ ಮನೆತನದವರೇ, ನೀವು ಸಾಯುವುದೇಕೆ?</verse>
				<verse number="32">ಏಕೆಂದರೆ ಯಾವುದೇ ವ್ಯಕ್ತಿಯ ಸಾವಿನಲ್ಲಿ ನನಗೆ ಸಂತೋಷವಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಆದಕಾರಣ ಮಾನಸಾಂತರಪಟ್ಟು ಬಾಳಿರಿ.</verse>
			</chapter>
			<chapter number="19">
				<verse number="1">“ಇದಲ್ಲದೆ ನೀನು ಇಸ್ರಾಯೇಲಿನ ಪ್ರಧಾನರ ವಿಷಯವಾಗಿ ಈ ಪ್ರಲಾಪವನ್ನೆತ್ತಿ,</verse>
				<verse number="2">ಹೀಗೆ ಹೇಳು: “ ‘ಇಗೋ, ನಿನ್ನ ತಾಯಿ, ಸಿಂಹಗಳ ಮಧ್ಯೆ ಸಿಂಹಿಣಿ, ತನ್ನ ಮರಿಗಳನ್ನು ಸಾಕಿ, ಯುವ ಸಿಂಹಗಳ ನಡುವೆ ವಾಸಿಸಿತು.</verse>
				<verse number="3">ಅವಳೂ ತನ್ನ ಮರಿಗಳಲ್ಲಿ ಒಂದನ್ನು ಬೆಳೆಸಿದಳು, ಇದು ಪ್ರಾಯದ ಸಿಂಹವಾಯಿತು. ಇದು ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಿಬಿಟ್ಟಿತು.</verse>
				<verse number="4">ಜನಾಂಗಗಳವರು ಅದರ ಸುದ್ದಿಯನ್ನು ಕೇಳಿದರು, ಅವರ ಗುಂಡಿಯಲ್ಲಿ ಇದನ್ನು ಹಿಡಿದುಕೊಂಡರು. ಸಂಕೋಲೆಗಳಿಂದ ಬಂಧಿಸಿ, ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದರು.</verse>
				<verse number="5">“ ‘ಆಗ ಅವಳು ಅದನ್ನು ನೋಡಿ ತನ್ನ ನಿರೀಕ್ಷೆ ಕಳೆದುಕೊಂಡೆನೆಂದು ತನ್ನ ಮರಿಗಳಲ್ಲಿ ಮತ್ತೊಂದನ್ನು ತೆಗೆದುಕೊಂಡು, ಅದನ್ನು ಪ್ರಾಯದ ಸಿಂಹವಾಗಿ ಮಾಡಿದಳು.</verse>
				<verse number="6">ಅದೂ ಸಿಂಹಗಳ ನಡುವೆ ತಿರುಗಾಡಿ, ಪ್ರಾಯದ ಸಿಂಹವಾಗಿ ಬೇಟೆಯನ್ನು ಕಲಿತು, ಮನುಷ್ಯರನ್ನು ನುಂಗಿಬಿಟ್ಟಿತು.</verse>
				<verse number="7">ಅವರ ಅರಮನೆಗಳನ್ನು ಹಾಳುಮಾಡಿತು, ಅವರ ನಗರಗಳನ್ನೂ ನಾಶಮಾಡಿತು, ಅದರ ಘರ್ಜನೆಯ ಶಬ್ದದಿಂದಾಗಿ ದೇಶವೂ, ಅದರಲ್ಲಿದ್ದ ಎಲ್ಲರೂ ದಂಗಾದವು.</verse>
				<verse number="8">ಆಗ ಜನಾಂಗಗಳು ಸುತ್ತಲಿನ ಪ್ರಾಂತಗಳೊಳಗಿಂದ ಕೂಡಿಬಂದು, ಅದಕ್ಕೆ ವಿರೋಧವಾಗಿ ನಿಂತು, ಅದರ ಮೇಲೆ ಬಲೆಯನ್ನೊಡ್ಡಿದರು, ಆಗ ಅದು ಅವರ ಗುಂಡಿಯಲ್ಲಿ ಸಿಕ್ಕಿಬಿದ್ದಿತು.</verse>
				<verse number="9">ಅದಕ್ಕೆ ಸಂಕೋಲೆಗಳನ್ನು ತೊಡಿಸಿ, ಪಂಜರದಲ್ಲಿ ಹಾಕಿ, ಬಾಬಿಲೋನಿನ ಅರಸನ ಬಳಿಗೆ ತೆಗೆದುಕೊಂಡು ಹೋದರು. ಅದರ ಶಬ್ದವು ಇನ್ನು ಮೇಲೆ ಇಸ್ರಾಯೇಲಿನ ಪರ್ವತಗಳ ಮೇಲೆ ಕೇಳಿಸದಂತೆ ಅದನ್ನು ಕೋಟೆಯೊಳಗೆ ಸೇರಿಸಿದರು.</verse>
				<verse number="10">“ ‘ನಿನ್ನ ತಾಯಿ ನೀರಿನ ಬಳಿಯಲ್ಲಿ ನೆಟ್ಟ ದ್ರಾಕ್ಷಿ ಗಿಡದ ಹಾಗೆ ಇದ್ದಾಳೆ. ಅದು ಸಮೃದ್ಧಿಯಾದ ನೀರಾವರಿಯಿಂದ ಫಲವುಳ್ಳದ್ದಾಗಿಯೂ ಇದೆ.</verse>
				<verse number="11">ಆಳುವವರ ರಾಜದಂಡಗಳಿಗೆ ತಕ್ಕ ಬಲವುಳ್ಳ ಬಳ್ಳಿಗಳು ಅದರಲ್ಲಿವೆ. ಅದರ ಉದ್ದವು ಎಲ್ಲಾ ರೆಂಬೆಗಳಿಗಿಂತ ಹೆಚ್ಚಾಗಿವೆ. ಹಾಗೆಯೇ ಅದು ಬಹು ಕೊಂಬೆಗಳ ಮಧ್ಯದಲ್ಲಿ ಎತ್ತರವಾಗಿ ಕಾಣಬರುತ್ತಿದೆ.</verse>
				<verse number="12">ಆದರೆ ಆ ಲತೆಯನ್ನು ರೋಷದಲ್ಲಿ ಕಿತ್ತು ನೆಲಕ್ಕೆ ಬಿಸಾಡಿದರು. ಪೂರ್ವದಿಕ್ಕಿನ ಗಾಳಿಯು ಅದರ ಫಲವನ್ನು ಒಣಗಿಸಿತು. ಅದರ ಬಲವಾದ ಬಳ್ಳಿಗಳು ಮುರಿದು ಒಣಗಿಹೋದವು. ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.</verse>
				<verse number="13">ಈಗ ಅದು ಮರುಭೂಮಿಯಲ್ಲಿ ಒಣಗಿ, ನೀರಿಲ್ಲದಂಥ ಪ್ರದೇಶದಲ್ಲಿ ನೆಡಲಾಗಿದೆ.</verse>
				<verse number="14">ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು, ಅದರಲ್ಲಿ ಫಲವನ್ನು ತಿಂದುಬಿಟ್ಟಿದೆ. ಅದರಲ್ಲಿ ಆಳುವುದಕ್ಕೆ ರಾಜದಂಡಕ್ಕಾಗಿ ತಕ್ಕ ಬಲವುಳ್ಳ ಬಳ್ಳಿಯು ಈಗ ಇಲ್ಲ.’ ಇದು ಪ್ರಲಾಪವಾಗಿದೆ. ಪ್ರಲಾಪಕ್ಕಾಗಿಯೇ ಇದೆ.”</verse>
			</chapter>
			<chapter number="20">
				<verse number="1">ಏಳನೆಯ ವರ್ಷದ, ಐದನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವ ದೇವರ ಬಳಿಗೆ ವಿಚಾರಣೆಗಾಗಿ ಬಂದು ನನ್ನ ಮುಂದೆ ಕುಳಿತುಕೊಂಡರು.</verse>
				<verse number="2">ಆಗ ಯೆಹೋವ ದೇವರ ವಾಕ್ಯವು ನನಗೆ ಬಂದಿತು,</verse>
				<verse number="3">“ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನನ್ನು ಪ್ರಶ್ನೆಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ, ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’</verse>
				<verse number="4">“ನೀನು ಅವರಿಗೆ ನ್ಯಾಯತೀರಿಸುವೆಯೋ? ಮನುಷ್ಯಪುತ್ರನೇ, ನೀನು ಅವರಿಗೆ ನ್ಯಾಯತೀರಿಸುವೆಯೋ? ಹಾಗಾದರೆ ಅವರ ಪಿತೃಗಳ ಅಸಹ್ಯವಾದವುಗಳನ್ನು ಅವರಿಗೆ ತಿಳಿಸು.</verse>
				<verse number="5">ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಇಸ್ರಾಯೇಲನ್ನು ಆಯ್ದುಕೊಂಡ ದಿವಸದಲ್ಲಿ ಯಾಕೋಬನ ವಂಶದವರಿಗೆ ನನ್ನ ಕೈಯೆತ್ತಿ, “ನಿಮ್ಮ ಸಾರ್ವಭೌಮ ಯೆಹೋವ ದೇವರು ನಾನೇ” ಎಂದು ಈಜಿಪ್ಟ್ ದೇಶದಲ್ಲಿ ಅವರಿಗೆ ಹೇಳಿದೆನು.</verse>
				<verse number="6">ನಾನು ಅವರಿಗೆ ಪ್ರಮಾಣಮಾಡಿ ಈಜಿಪ್ಟ್ ದೇಶದಿಂದ ಹೊರಗೆ ತಂದು, ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ದೇಶಕ್ಕೆ ಅವರನ್ನು ಆ ದಿವಸದಲ್ಲಿ ಕರೆತಂದೆನು.</verse>
				<verse number="7">ಆಮೇಲೆ ನಾನು ಅವರಿಗೆ, “ನಿಮ್ಮಲ್ಲಿ ಒಬ್ಬೊಬ್ಬನು ತಮ್ಮ ತಮ್ಮ ಕಣ್ಣುಗಳ ಮುಂದೆ ಅಸಹ್ಯವಾದವುಗಳನ್ನು ಬಿಸಾಡಿ ಬಿಡಿರಿ. ಈಜಿಪ್ಟಿನ ವಿಗ್ರಹಗಳಿಂದ ನಿಮ್ಮನ್ನು ಅಶುದ್ಧಪಡಿಸಿಕೊಳ್ಳಬೇಡಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನಾಗಿರುವೆನು.”</verse>
				<verse number="8">“ ‘ಆದರೆ ಅವರು ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನಗೆ ಕಿವಿಗೊಡಲಿಲ್ಲ. ಅವರು ತಮ್ಮ ಕಣ್ಣಿಗೆ ಅಸಹ್ಯವಾದವುಗಳನ್ನು ಬಿಸಾಡಲಿಲ್ಲ. ಅವರು ಈಜಿಪ್ಟಿನ ವಿಗ್ರಹಗಳನ್ನು ಬಿಡಲಿಲ್ಲ. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿಸಿ, ಈಜಿಪ್ಟ್ ದೇಶದಲ್ಲಿ ಅವರ ಮೇಲೆ ನನ್ನ ಕೋಪವನ್ನು ತೀರಿಸುವೆನೆಂದು ಹೇಳಿದೆನು.</verse>
				<verse number="9">ಆದರೆ ಅವರು ಯಾರ ಮಧ್ಯದಲ್ಲಿದ್ದರೋ, ನಾನು ಯಾರ ಮುಂದೆ ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ತಂದು ನನ್ನನ್ನು ತಿಳಿಯಪಡಿಸಿದೆನೋ ಆ ಜನಾಂಗಗಳ ಕಣ್ಣುಗಳ ಮುಂದೆ ನನ್ನ ಹೆಸರು ಅಪವಿತ್ರವಾಗದ ಹಾಗೆ ನನ್ನ ಹೆಸರಿಗೋಸ್ಕರವೇ ಈ ಕೆಲಸವನ್ನು ಮಾಡಿದೆನು.</verse>
				<verse number="10">ಆದ್ದರಿಂದ ನಾನು ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ಕರೆತಂದು, ಮರುಭೂಮಿಯೊಳಗೆ ಅವರನ್ನು ಬರಮಾಡಿದೆನು.</verse>
				<verse number="11">ಯಾವ ಸಂಗತಿಗಳನ್ನು ಮಾಡಿದರೆ ಮನುಷ್ಯನು ಬದುಕುವನೋ? ಆ ನನ್ನ ನಿಯಮಗಳನ್ನು ಅವರಿಗೆ ಕೊಟ್ಟು, ನನ್ನ ನ್ಯಾಯಗಳನ್ನು ಅವರಿಗೆ ತಿಳಿಸಿದೆನು.</verse>
				<verse number="12">ಇದಲ್ಲದೆ ಅವರನ್ನು ಪರಿಶುದ್ಧ ಮಾಡುವ ಯೆಹೋವ ದೇವರು ನಾನೇ ಎಂದು ಅವರು ತಿಳಿಯುವ ಹಾಗೆ ನನಗೂ, ಅವರಿಗೂ ಗುರುತಾಗಿರುವುದಕ್ಕೆ ನನ್ನ ಸಬ್ಬತ್ ದಿನಗಳನ್ನು ನಾನು ಅವರಿಗೆ ಕೊಟ್ಟೆನು.</verse>
				<verse number="13">“ ‘ಆದರೆ ಇಸ್ರಾಯೇಲ್ ಜನರು ಮರುಭೂಮಿಯಲ್ಲಿಯೂ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ, ನನ್ನ ಅಪ್ಪಣೆಗಳನ್ನು ತಿರಸ್ಕರಿಸಿದರು. ಅವುಗಳಿಗೆ ವಿಧೇಯನಾಗುವವನು ಅವುಗಳಿಂದ ಜೀವಿಸುವನು. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು. ಆಗ ನಾನು ಅವರ ಮೇಲೆ ನನ್ನ ರೋಷವನ್ನು ಸುರಿದು, ಅವರನ್ನು ಮರುಭೂಮಿಯಲ್ಲಿ ನಾಶಮಾಡುವೆನೆಂದು ಹೇಳಿದೆನು.</verse>
				<verse number="14">ಆದರೆ ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಬರಮಾಡಿದೆನೋ, ಆ ಜನಾಂಗಗಳ ದೃಷ್ಟಿಯಲ್ಲಿ ಅಪವಿತ್ರವಾಗದ ಹಾಗೆ ನನ್ನ ಹೆಸರಿಗಾಗಿಯೇ ಕೆಲಸ ಮಾಡಿದೆನು.</verse>
				<verse number="15">ಆದರೂ ಹಾಲೂ ಜೇನೂ ಹರಿಯುವಂಥ ದೇಶಗಳಿಗೆ ಕೀರ್ತಿಯಾಗಿರುವಂಥ ಆ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಮರುಭೂಮಿಯಲ್ಲಿ ಅವರಿಗೆ ನನ್ನ ಕೈಯೆತ್ತಿ ಪ್ರಮಾಣಮಾಡಿದೆನು.</verse>
				<verse number="16">ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ, ನನ್ನ ನಿಯಮಗಳನ್ನು ಅನುಸರಿಸದೆ ನಿರಾಕರಿಸಿ, ನಾನು ನೇಮಿಸಿದ ವಿಶ್ರಾಂತಿಯ ದಿನಗಳನ್ನು ಅಪವಿತ್ರ ಮಾಡಿದ್ದರು.</verse>
				<verse number="17">ಆದರೂ ಅವರನ್ನು ನಾನು ನಾಶಮಾಡದ ಹಾಗೆ ನನ್ನ ಕಣ್ಣು ಕನಿಕರಿಸಿತು. ನಾನು ಅವರನ್ನು ಮರುಭೂಮಿಯಲ್ಲಿ ಅಂತ್ಯಗೊಳಿಸಲಿಲ್ಲ.</verse>
				<verse number="18">ಮರುಭೂಮಿಯಲ್ಲಿ ನಾನು ಅವರ ಮಕ್ಕಳಿಗೆ ಹೇಳಿದ್ದೇನೆಂದರೆ, “ನೀವು ನಿಮ್ಮ ತಂದೆಗಳ ನಿಯಮಗಳನ್ನು ಅನುಸರಿಸಬೇಡಿರಿ, ಅವರ ನ್ಯಾಯಗಳನ್ನು ಕೈಕೊಳ್ಳಬೇಡಿರಿ, ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಮಾಡಿಕೊಳ್ಳಬೇಡಿರಿ.</verse>
				<verse number="19">ನಾನೇ ಯೆಹೋವ ದೇವರೂ ನಿಮ್ಮ ದೇವರೂ ಆಗಿದ್ದೇನೆ. ನನ್ನ ನಿಯಮಗಳಲ್ಲೇ ನಡೆಯಿರಿ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಕೈಗೊಂಡು ಅವುಗಳನ್ನೇ ಮಾಡಿರಿ.</verse>
				<verse number="20">ನನ್ನ ಸಬ್ಬತ್ ದಿನಗಳನ್ನು ಪರಿಶುದ್ಧ ಮಾಡಿರಿ, ನಾನೇ ನಿಮ್ಮ ದೇವರಾದ ಯೆಹೋವ ದೇವರು ಎಂದು ಅವು ನಿಮಗೂ ನನಗೂ, ನೀವು ತಿಳಿಯುವ ಹಾಗೆ ಗುರುತುಗಳಾಗಿರುವುವು.”</verse>
				<verse number="21">“ ‘ಆದರೆ ಮಕ್ಕಳು ನನಗೆ ವಿರೋಧವಾಗಿ ತಿರುಗಿಬಿದ್ದರು. ಯಾವವುಗಳನ್ನು ಮನುಷ್ಯನು ಮಾಡಿದರೆ ಬದುಕುವನೋ, ಆ ನನ್ನ ನಿಯಮಗಳಲ್ಲಿ ನಡೆಯಲಿಲ್ಲ ಮತ್ತು ನನ್ನ ನ್ಯಾಯಗಳನ್ನು ಜಾಗರೂಕತೆಯಿಂದ ಪಾಲಿಸಿ ನಡೆಯಲಿಲ್ಲ. ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದಿರಿ. ಆಗ ಅವರ ಮೇಲೆ ನನ್ನ ರೋಷವನ್ನು ಸುರಿದುಬಿಡುವೆನೆಂದೂ, ನನ್ನ ಕೋಪವನ್ನು ಮರುಭೂಮಿಯಲ್ಲಿ ಅವರ ಮೇಲೆ ತೀರಿಸಿ ಬಿಡುವೆನೆಂದೂ ಹೇಳಿದೆನು.</verse>
				<verse number="22">ಆದರೂ ನಾನು ನನ್ನ ಕೈಯನ್ನು ಹಿಂತೆಗೆದು, ನಾನು ಅವರನ್ನು ಯಾರ ಕಣ್ಣುಗಳ ಮುಂದೆ ಹೊರಗೆ ಬರಮಾಡಿದೆನೋ, ಆ ಜನಾಂಗಗಳ ದೃಷ್ಟಿಯಲ್ಲಿ ನನ್ನ ಹೆಸರು ಅಪವಿತ್ರವಾಗದ ಹಾಗೆ, ನನ್ನ ಹೆಸರಿಗೋಸ್ಕರವೇ ಕೆಲಸ ಮಾಡಿದೆನು.</verse>
				<verse number="23">ನಾನು ಅವರನ್ನು ಇತರ ಜನಾಂಗಗಳಲ್ಲಿ ಚದರಿಸುತ್ತೇನೆಂದೂ, ದೇಶಗಳಲ್ಲಿ ಹರಡಿಸುತ್ತೇನೆಂದೂ ಮರುಭೂಮಿಯಲ್ಲಿ ಅವರ ಮೇಲೆ ಕೈಯೆತ್ತಿ ಪ್ರಮಾಣಮಾಡಿದೆನು.</verse>
				<verse number="24">ಏಕೆಂದರೆ ಅವರು ನನ್ನ ನ್ಯಾಯಗಳಲ್ಲಿ ನಡೆಯದೆ, ನನ್ನ ನಿಯಮಗಳನ್ನು ಅಲಕ್ಷಿಸಿ, ನನ್ನ ಸಬ್ಬತ್ ದಿನಗಳನ್ನು ಅಪವಿತ್ರಪಡಿಸಿದರು. ತಮ್ಮ ಪಿತೃಗಳ ವಿಗ್ರಹಗಳ ಕಡೆಗೆ ಕಣ್ಣಿಟ್ಟಿದ್ದರು.</verse>
				<verse number="25">ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ನಿಯಮಗಳನ್ನೂ, ಅವರು ಬದುಕಬಾರದ ನ್ಯಾಯಗಳನ್ನೂ ಕೊಟ್ಟೆನು.</verse>
				<verse number="26">ಅವರು ತಮ್ಮ ಚೊಚ್ಚಲು ಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ, ಕೇವಲ ದುರವಸ್ಥೆಗೆ ತಂದೆನು. ಆಗ ನಾನೇ ಯೆಹೋವ ದೇವರೆಂದು ಅವರು ತಿಳಿದುಕೊಳ್ಳುವರು.’</verse>
				<verse number="27">“ಆದ್ದರಿಂದ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರ ಸಂಗಡ ಮಾತನಾಡಿ ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನಗೆ ವಿರುದ್ಧವಾಗಿ ಬಹಳ ಅಪರಾಧಮಾಡಿದ್ದರಲ್ಲಿಯೂ ನಿಮ್ಮ ಪಿತೃಗಳು ನನ್ನನ್ನು ದೂಷಿಸಿದರು.</verse>
				<verse number="28">ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಮರಗಳನ್ನೂ ನೋಡಿ, ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಸುವಾಸನೆಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.</verse>
				<verse number="29">ಆಗ ನಾನು ಅವರಿಗೆ ಹೇಳಿದ್ದೇನೆಂದರೆ: ನೀವು ಹೋಗುವ ಈ ಎತ್ತರವಾದ ಸ್ಥಳವು ಏನು? ಅದಕ್ಕೆ ಈ ದಿನದವರೆಗೂ ಬಾಮಾ ಎಂದು ಕರೆಯುವರು.’ ”</verse>
				<verse number="30">“ಆದ್ದರಿಂದ ನೀನು ಇಸ್ರಾಯೇಲಿನ ಮನೆತನದವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಮ್ಮ ಪಿತೃಗಳ ಹಾಗೆ ನಿಮ್ಮನ್ನು ಅಪವಿತ್ರಪಡಿಸಿಕೊಳ್ಳುತ್ತೀರೋ? ಅವರ ಅಸಹ್ಯವಾದ ವಿಗ್ರಹಗಳ ಹಿಂದೆ ಹೋಗುತ್ತೀರೋ?</verse>
				<verse number="31">ನಿಮ್ಮ ದಾನಗಳನ್ನು ತರುವಾಗಲೂ, ಬೆಂಕಿಯಲ್ಲಿ ನಿಮ್ಮ ಮಕ್ಕಳನ್ನು ಯಜ್ಞವಾಗಿ ಅರ್ಪಿಸುವಾಗಲೂ, ನೀವು ಇಂದಿನವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿಕೊಳ್ಳುತ್ತಿದ್ದೀರಿ. ಹೀಗಿರುವಾಗ ಇಸ್ರಾಯೇಲ್ ವಂಶದವರೇ, ನೀವು ನನ್ನನ್ನು ವಿಚಾರಿಸಲು ಅನುಮತಿಸಬೇಕೆ? ನನ್ನ ಜೀವದಾಣೆ ನಾನು ನಿಮ್ಮನ್ನು ವಿಚಾರಿಸಲು ಅನುಮತಿಸುವುದಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="32">“ ‘ “ನಾವು ಇತರ ಜನಾಂಗಗಳ ಹಾಗೆ ಮತ್ತು ಇತರ ದೇಶಗಳವರ ಹಾಗೆ ಇದ್ದು ಮರಕ್ಕೂ ಕಲ್ಲಿಗೂ ಸೇವೆ ಮಾಡುತ್ತೇವೆಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟು ಮಾತ್ರಕ್ಕೂ ನೆರವೇರದು.”</verse>
				<verse number="33">ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನನ್ನ ಜೀವದಾಣೆ, ನಿಶ್ಚಯವಾಗಿ ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಸುರಿಸಿದ ರೋಷದಿಂದಲೂ ನಾನು ನಿಮ್ಮ ಮೇಲೆ ಅಧಿಕಾರ ನಡೆಸುತ್ತೇನೆ.</verse>
				<verse number="34">ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ, ಸುರಿಸಿದ ರೋಷದಿಂದಲೂ, ನಿಮ್ಮನ್ನು ಜನರೊಳಗಿಂದ ಹೊರತಂದು ನೀವು ಚದರಿಹೋಗಿರುವ ದೇಶಗಳೊಳಗಿಂದ ನಿಮ್ಮನ್ನು ಒಂದಾಗಿ ಕೂಡಿಸುವೆನು.</verse>
				<verse number="35">ನಿಮ್ಮನ್ನು ಜನರಿರುವ ಮರುಭೂಮಿಯೊಳಗೆ ತಂದು, ನಿಮ್ಮೊಂದಿಗೆ ಅಲ್ಲಿ ಮುಖಾಮುಖಿಯಾಗಿ ನ್ಯಾಯತೀರ್ಪು ಮಾಡುವೆನು.</verse>
				<verse number="36">ಅದೇ ರೀತಿ ನಾನು ನಿಮ್ಮ ಪಿತೃಗಳ ಸಂಗಡ ಈಜಿಪ್ಟ್ ದೇಶದ ಮರುಭೂಮಿಯಲ್ಲಿ ನ್ಯಾಯತೀರ್ಪು ಮಾಡಿದೆನು. ಈಗಲೂ ನಿಮ್ಮ ಸಂಗಡ ನ್ಯಾಯತೀರ್ಪು ಮಾಡುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="37">ನೀವು ನನ್ನ ಕೋಲಿನ ಕೆಳಗೆ ನಡೆಯುವಾಗ, ನನ್ನ ಗಮನವು ನಿಮ್ಮ ಮೇಲೆ ಇರುತ್ತದೆ ಮತ್ತು ನಾನು ನಿಮ್ಮನ್ನು ಒಡಂಬಡಿಕೆಗೆ ತರುತ್ತೇನೆ.</verse>
				<verse number="38">ತಿರುಗಿಬಿದ್ದವರನ್ನೂ ನನಗೆ ವಿರೋಧವಾಗಿ ಅಪರಾಧ ಮಾಡಿದವರನ್ನೂ ನಿಮ್ಮೊಂದಿಗೆ ಶುದ್ಧಮಾಡುತ್ತೇನೆ. ಅವರು ಪ್ರವಾಸಿಗಳಾಗಿದ್ದ ದೇಶದೊಳಗಿಂದ ಅವರನ್ನು ಹೊರಗೆ ತರುತ್ತೇನೆ. ಆದರೆ ಅವರು ಇಸ್ರಾಯೇಲ್ ದೇಶದೊಳಗೆ ಹೋಗದ ಹಾಗೆ ಮಾಡಿ, ನಾನೇ ಯೆಹೋವ ದೇವರೆಂಬುದನ್ನು ಅವರಿಗೆ ತಿಳಿಸುತ್ತೇನೆ.</verse>
				<verse number="39">“ ‘ನಿಮ್ಮ ವಿಷಯವಾಗಿ, ಓ ಇಸ್ರಾಯೇಲಿನ ಮನೆತನದವರೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೋಗಿರಿ, ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ. ಆದರೆ ನಂತರ ನೀವು ಖಂಡಿತವಾಗಿಯೂ ನನ್ನ ಮಾತನ್ನು ಕೇಳುತ್ತೀರಿ ಮತ್ತು ನಿಮ್ಮ ದಾನಗಳಿಂದಲೂ, ನಿಮ್ಮ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.</verse>
				<verse number="40">ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನನ್ನ ಪರಿಶುದ್ಧ ಪರ್ವತದಲ್ಲಿಯೇ, ಇಸ್ರಾಯೇಲಿನ ಉನ್ನತ ಪರ್ವತದಲ್ಲಿಯೇ ಇಸ್ರಾಯೇಲಿನ ಮನೆತನದವರೆಲ್ಲರೂ, ದೇಶದಲ್ಲಿರುವವರೆಲ್ಲರೂ ನನ್ನನ್ನು ಸೇವಿಸುವರು. ನಾನು ಅಲ್ಲಿ ಅವರಿಗೆ ಮೆಚ್ಚಿ, ನಿಮ್ಮ ಉತ್ತಮ ಅರ್ಪಣೆಗಳನ್ನೂ, ನಿಮ್ಮ ಕಾಣಿಕೆಗಳ ಪ್ರಥಮ ಫಲವನ್ನೂ, ನಿಮ್ಮ ಎಲ್ಲಾ ಪರಿಶುದ್ಧ ಸಂಗತಿಗಳನ್ನೂ ಅಂಗೀಕರಿಸುವೆನು.</verse>
				<verse number="41">ನಾನು ನಿಮ್ಮನ್ನು ಇತರ ಜನಾಂಗಗಳೊಳಗಿಂದ ಹೊರತಂದು, ನೀವು ಚದರಿಸುವ ದೇಶದೊಳಗಿಂದ ಕೂಡಿಸುವಾಗ, ನಿಮ್ಮನ್ನು ಸುವಾಸನೆಯಂತೆ ಅಂಗೀಕರಿಸುವೆನು. ಇತರ ಜನಾಂಗಗಳ ಮುಂದೆ ನನ್ನನ್ನು ಪರಿಶುದ್ಧನೆಂದು ತೋರಿಸುವೆನು.</verse>
				<verse number="42">ನಾನು ನಿಮ್ಮ ಮೇಲೆ ಇಸ್ರಾಯೇಲ್ ದೇಶದಲ್ಲಿ ನನ್ನ ಕೈಯೆತ್ತಿ ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಿಂದ ನಿಮ್ಮನ್ನು ಕರೆದುಕೊಂಡು ಬರುವಾಗ, ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ.</verse>
				<verse number="43">ಅಲ್ಲಿ ನೀವು ನಿಮ್ಮ ಮಾರ್ಗಗಳನ್ನು ಬಿಟ್ಟು, ನೀವು ಯಾವ ಸಂಗತಿಗಳಿಂದ ಅಶುದ್ಧವಾಗಿದ್ದೀರೋ, ಆ ನಿಮ್ಮ ಕ್ರಿಯೆಗಳನ್ನೆಲ್ಲಾ ಜ್ಞಾಪಕ ಮಾಡಿಕೊಳ್ಳುವಿರಿ. ನೀವು ಮಾಡಿದ ನಿಮ್ಮ ಎಲ್ಲಾ ಕೆಟ್ಟತನದ ನಿಮಿತ್ತವಾಗಿ ನಿಮ್ಮ ಸ್ವಂತ ದೃಷ್ಟಿಯಲ್ಲಿಯೇ ನೀವು ಅಸಹ್ಯರಾಗುವಿರಿ.</verse>
				<verse number="44">ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗಗಳ ಪ್ರಕಾರವಲ್ಲ, ನಿಮ್ಮ ದುಷ್ಕೃತ್ಯಗಳ ಪ್ರಕಾರವಲ್ಲ, ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಸಹಿಸಿಕೊಂಡಿರುವಾಗ, ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”</verse>
				<verse number="45">ಯೆಹೋವ ದೇವರ ವಾಕ್ಯವು ನನಗೆ ಬಂದಿತು:</verse>
				<verse number="46">“ಮನುಷ್ಯಪುತ್ರನೇ, ದಕ್ಷಿಣದ ಕಡೆಗೆ ಮುಖಮಾಡಿ, ದಕ್ಷಿಣದ ಕಡೆಗೆ ಮಾತನಾಡು. ದಕ್ಷಿಣ ಬಯಲು ಮರುಭೂಮಿಗೆ ವಿರೋಧವಾಗಿ ಪ್ರವಾದಿಸು.</verse>
				<verse number="47">ದಕ್ಷಿಣದ ಮರುಭೂಮಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರ ವಾಕ್ಯವನ್ನು ಕೇಳು. ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ. ಅದು ನಿನ್ನಲ್ಲಿರುವ ಎಲ್ಲಾ ಹಸಿಮರಗಳನ್ನು ಮತ್ತು ಎಲ್ಲಾ ಒಣ ಮರಗಳನ್ನು ತಿಂದುಬಿಡುವುದು. ಉರಿಯುವ ಜ್ವಾಲೆ ಆರಿಹೋಗುವುದಿಲ್ಲ. ದಕ್ಷಿಣ ಮೊದಲುಗೊಂಡು ಉತ್ತರದವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟುಹೋಗುವುವು.</verse>
				<verse number="48">ಯೆಹೋವ ದೇವರಾದ ನಾನೇ ಅದನ್ನು ಹಚ್ಚಿದೆನೆಂದು ಪ್ರತಿಯೊಬ್ಬರೂ ತಿಳಿದುಕೊಳ್ಳುವರು, ಅದು ಆರಿಹೋಗುವುದಿಲ್ಲ.’ ”</verse>
				<verse number="49">ಆಗ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ‘ಅವನು ಸಾಮ್ಯಗಳನ್ನು ಹೇಳುವುದಿಲ್ಲವೇ?’ ಎಂದು ನನ್ನ ವಿಷಯದಲ್ಲಿ ಅವರು ಹೇಳುತ್ತಾರೆ,” ಎಂದೆನು.</verse>
			</chapter>
			<chapter number="21">
				<verse number="1">ಯೆಹೋವ ದೇವರ ವಾಕ್ಯವು ನನಗೆ ಬಂದಿತು,</verse>
				<verse number="2">“ಮನುಷ್ಯಪುತ್ರನೇ, ನೀನು ಯೆರೂಸಲೇಮಿಗೆ ಅಭಿಮುಖವಾಗಿ ಅಲ್ಲಿನ ಪರಿಶುದ್ಧ ಸ್ಥಳಗಳ ಕಡೆಗೆ ಮಾತನಾಡುತ್ತಾ ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಪ್ರವಾದಿಸಿ,</verse>
				<verse number="3">‘ಇಸ್ರಾಯೇಲ್ ದೇಶಕ್ಕೆ ಹೇಳಬೇಕಾದದ್ದೇನೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ. ನನ್ನ ಖಡ್ಗವನ್ನು ಅದರ ಒರೆಯಿಂದ ಹೊರಗೆ ತೆಗೆದು, ನಿನ್ನೊಳಗಿರುವ ನೀತಿವಂತರನ್ನೂ, ದುಷ್ಟರನ್ನೂ ಕಡಿದುಬಿಡುವೆನು.</verse>
				<verse number="4">ಆಮೇಲೆ ನಾನು ನೀತಿವಂತರನ್ನೂ, ದುಷ್ಟರನ್ನೂ ಕಡಿದುಬಿಡುವುದರಿಂದ ನನ್ನ ಖಡ್ಗವು ದಕ್ಷಿಣದಿಂದ ಮೊದಲುಗೊಂಡು ಉತ್ತರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆಯನ್ನು ಬಿಟ್ಟು ಹೋಗುವುದು.</verse>
				<verse number="5">ಆಗ ಯೆಹೋವ ದೇವರಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹೊರಗೆ ತೆಗೆದೆನೆಂದು ಜನರೆಲ್ಲರಿಗೂ ತಿಳಿಯುವುದು, ಅದು ಮತ್ತೆ ತಿರುಗಿ ಬರುವುದೇ ಇಲ್ಲ.’</verse>
				<verse number="6">“ಆದ್ದರಿಂದ ಮನುಷ್ಯಪುತ್ರನೇ, ನರಳಾಡು! ಮುರಿದ ಹೃದಯ ಮತ್ತು ಕಹಿ ದುಃಖದಿಂದ ಅವರ ಮುಂದೆ ನರಳಾಡು.</verse>
				<verse number="7">‘ನೀನು ಏಕೆ ನರಳಾಡುತ್ತೀ?’ ಎಂದು ಅವರು ನಿನಗೆ ಕೇಳಿದಾಗ, ನೀನು ಹೇಳಬೇಕಾದದ್ದೇನೆಂದರೆ, ‘ಆ ಸುದ್ದಿಯ ನಿಮಿತ್ತವೇ ಅದು ಬರುವುದು. ಏಕೆಂದರೆ ಆಗ ಹೃದಯಗಳೆಲ್ಲಾ ಕರಗುವುವು. ಕೈಗಳೆಲ್ಲಾ ನಿತ್ರಾಣವಾಗುವುವು. ಪ್ರತಿಯೊಂದು ಆತ್ಮವು ಕುಂದುವದು. ಎಲ್ಲಾ ಮೊಣಕಾಲುಗಳು ನೀರಿನಂತೆ ತೇವವಾಗಿರುತ್ತವೆ. ಅದು ಬರುತ್ತದೆ, ಅದು ತರಲಾಗುತ್ತದೆ,’ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”</verse>
				<verse number="8">ಯೆಹೋವ ದೇವರ ವಾಕ್ಯವು ನನಗೆ ಬಂದಿತು,</verse>
				<verse number="9">“ಮನುಷ್ಯಪುತ್ರನೇ, ಪ್ರವಾದಿಸಿ, ‘ಯೆಹೋವ ದೇವರು ಹೀಗೆ ಹೇಳುತ್ತಾರೆಂದು ಹೇಳು: “ ‘ಆ ಒಂದು ಖಡ್ಗವು ಹದಮಾಡಲಾಗಿದೆ; ಮೆರುಗೂ ಸಹ ಮಾಡಲಾಗಿದೆ.</verse>
				<verse number="10">ಸಂಹರಿಸಲು ಸಾಣೆಹಿಡಿದಿದೆ; ಮಿಂಚುವಂತೆ ಮಸೆಯಲಾಗಿದೆ. “ ‘ಹಾಗಾದರೆ ನನ್ನ ಮಗ ಯೆಹೂದದ ರಾಜದಂಡದಲ್ಲಿ ನಾವು ಸಂತೋಷ ಪಡಬಹುದೋ? ಅಂಥ ಪ್ರತಿಯೊಂದು ಬೆತ್ತವನ್ನೂ ಖಡ್ಗವು ತಿರಸ್ಕರಿಸುತ್ತದೆ.</verse>
				<verse number="11">“ ‘ಖಡ್ಗವು ಕೈಯಲ್ಲಿ ಅದು ಹಿಡಿಯಲಾಗುವ ಹಾಗೆ ಮಸೆಯಲು ಕೊಡಲಾಗಿದೆ. ಕೊಲ್ಲುವವನ ಕೈಗೆ ಕೊಡುವ ಹಾಗೆ ಆ ಖಡ್ಗಕ್ಕೆ ಹದವನ್ನೂ, ಸಾಣೆಯನ್ನೂ ಮಾಡಲಾಗಿದೆ.</verse>
				<verse number="12">ಮನುಷ್ಯಪುತ್ರನೇ, ಕೂಗು ಮತ್ತು ಗೋಳಾಡು. ಏಕೆಂದರೆ ಅದು ನನ್ನ ಜನರ ಮೇಲೆಯೂ, ಇಸ್ರಾಯೇಲಿನ ಪ್ರಭುಗಳೆಲ್ಲರ ಮೇಲೆಯೂ ಇರುವುದು. ಖಡ್ಗದ ಮುಖಾಂತರ ಅಂಜಿಕೆಯು ನನ್ನ ಜನರ ಮೇಲೆ ಬರುವುದು. ಆದ್ದರಿಂದ ನಿನ್ನ ಎದೆಯನ್ನು ಬಡಿದುಕೋ.</verse>
				<verse number="13">“ ‘ಪರಿಶೋಧನೆಯು ಖಂಡಿತವಾಗಿ ಬರುವುದಿಲ್ಲ. ಖಡ್ಗವು ತಿರಸ್ಕರಿಸುವ ಯೆಹೂದದ ರಾಜದಂಡವು ಮುಂದುವರಿಯದಿದ್ದರೆ ಹೇಗೆ? ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’</verse>
				<verse number="14">“ಆದ್ದರಿಂದ ನೀನು ಮನುಷ್ಯಪುತ್ರನೇ, ಕೈಗೆ ಕೈತಟ್ಟಿ ಪ್ರವಾದಿಸು. ಹತರಾದವರ ಖಡ್ಗವಾದ ಆ ಖಡ್ಗವೇ ಎರಡರಷ್ಟು, ಮೂರರಷ್ಟು ಸಂಹರಿಸಲಿ. ಪ್ರಜೆಯನ್ನು ಹತಿಸುವ ಆ ಖಡ್ಗ ಸುತ್ತಲೂ ಬೀಸಿ ಆ ಕೊಠಡಿಗಳಲ್ಲಿ ಸೇರುವವರನ್ನು ಆ ದೊಡ್ಡ ಖಡ್ಗ ಸಂಹರಿಸುವುದು.</verse>
				<verse number="15">ಅವರ ಹೃದಯವು ಕರಗುವ ಹಾಗೆಯೂ, ಅವರ ಎಲ್ಲಾ ಬಾಗಿಲುಗಳಲ್ಲಿ ಪತನವು ಹೆಚ್ಚಾಗುವ ಹಾಗೆಯೂ ಖಡ್ಗದ ಮೊನೆ ಇಟ್ಟಿದ್ದೇನೆ. ಆಹಾ, ಮಿಂಚಿನಂತೆ ಹೊಡೆಯಲು ಈ ಬಲೆ ಹೆಣೆಯಲಾಗಿದೆ ಅದನ್ನು ಕೊಲೆಮಾಡುವುದಕ್ಕೆ ಮಸೆಯಲಾಗಿದೆ.</verse>
				<verse number="16">ಖಡ್ಗವೇ ಬಲಕ್ಕೆ ಹೊಡೆ, ಎಡಕ್ಕೆ ಹೊಡೆ, ನಿನ್ನ ಅಲಗು ತಿರುಗಿದ ಕಡೆಗೆಲ್ಲಾ ಹೊಡೆ.</verse>
				<verse number="17">ನಾನೂ ಸಹ ಕೈತಟ್ಟಿ ನನ್ನ ರೋಷವನ್ನು ತೀರಿಸಿಕೊಳ್ಳುವೆನು, ಎಂದು ಯೆಹೋವ ದೇವರಾದ ನಾನು ಹೇಳಿದ್ದೇನೆ.”</verse>
				<verse number="18">ಯೆಹೋವ ದೇವರ ವಾಕ್ಯವು ನನಗೆ ಬಂದಿತು:</verse>
				<verse number="19">“ಮನುಷ್ಯಪುತ್ರನೇ, ಬಾಬಿಲೋನಿನ ಅರಸನ ಖಡ್ಗವು ಬರುವ ಹಾಗೆ ನೀನು ಎರಡು ಮಾರ್ಗಗಳನ್ನು ನೇಮಿಸಿಕೋ. ಅವೆರಡು ದಾರಿಗಳು ಒಂದೇ ದೇಶದಿಂದ ಹೊರಟ ಹಾಗಿರಲಿ. ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು.</verse>
				<verse number="20">ಅಮ್ಮೋನ್ಯರ ರಬ್ಬಾ ಪಟ್ಟಣಕ್ಕೂ, ಯೆಹೂದದ ಕೋಟೆ ಕೊತ್ತಲಗಳಿಂದ ಕುಡಿದ ಯೆರೂಸಲೇಮಿಗೂ ಆ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.</verse>
				<verse number="21">ಬಾಬಿಲೋನಿನ ಅರಸನು, ಮಾರ್ಗವು ಒಡೆಯುವ ಸ್ಥಳದಲ್ಲಿ ಶಕುನವನ್ನು ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಅಲ್ಲಾಡಿಸಿದನು; ಮೂರ್ತಿಗಳ ಹತ್ತಿರ ವಿಚಾರಿಸಿದನು; ಅವನು ಹತ್ಯೆ ಮಾಡಿದ ಪ್ರಾಣಿಯ ಯಕೃತ್ತನ್ನು ಪರೀಕ್ಷಿಸುತ್ತಾರೆ.</verse>
				<verse number="22">ಅವನ ಬಲಗೈಯಲ್ಲಿ ಯೆರೂಸಲೇಮಿಗಾಗಿ ಶಕುನವು ಇತ್ತು. ಅಲ್ಲಿ ಅವನು ಬಡಿಯುವ ಆಯುಧಗಳನ್ನಿಟ್ಟು, ಬಾಯಿಬಿಟ್ಟು ಸಂಹಾರ ಧ್ವನಿಗೈದು, ಆರ್ಭಟವಿಟ್ಟು ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ದಿಬ್ಬ ಹಾಕಿ, ಒಡ್ಡು ಕಟ್ಟಿದ್ದು ಸೂಚನೆಯಾಗಿದೆ.</verse>
				<verse number="23">ಆದರೆ ಅವರು ತಾವು ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ನಂಬಿಕೆ ಇಟ್ಟಿದ್ದರಿಂದ, ಅವರಿಗೆ ಸುಳ್ಳು ಶಕುನದ ಹಾಗೆ ಕಾಣುವುದು. ಆದರೆ ಅವನು ಅವರ ಅಕ್ರಮವನ್ನು ಜ್ಞಾಪಕಪಡಿಸಿ, ಅವರನ್ನು ಸೆರೆಯಾಗಿ ಒಯ್ಯುವನು.</verse>
				<verse number="24">“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಿಮ್ಮ ದ್ರೋಹಗಳು ಪ್ರಕಟವಾಗಿ, ನಿಮ್ಮ ಕೆಲಸಗಳಲ್ಲೆಲ್ಲಾ ನಿಮ್ಮ ಪಾಪಗಳು ಕಾಣುವ ಹಾಗೆ, ನೀವು ನಿಮ್ಮ ಅಕ್ರಮಗಳನ್ನು ಜ್ಞಾಪಕಕ್ಕೆ ತಂದದ್ದರಿಂದ ನೀವು ಕೈಗೆ ಸಿಕ್ಕಿ ಬೀಳುವಿರಿ.</verse>
				<verse number="25">“ ‘ದುಷ್ಟನಾದ ಭ್ರಷ್ಟ ಇಸ್ರಾಯೇಲಿನ ರಾಜಕುಮಾರನೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು.</verse>
				<verse number="26">ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಮೊದಲಿದ್ದ ಹಾಗೆಯೇ ಇರುವುದಿಲ್ಲ; ತಗ್ಗಿಸಿಕೊಂಡವನನ್ನು ಹೆಚ್ಚಿಸಿ, ಹೆಚ್ಚಿಸಿಕೊಂಡವನನ್ನು ತಗ್ಗಿಸು.</verse>
				<verse number="27">ಬಾ, ನಾಶನ! ನಾಶನ! ನಾನು ಅದನ್ನು ಪಾಳು ಬೀಳುವಂತೆ ಮಾಡುವೆನು. ಅದು ಯಾರದೋ, ಅವನು ಬರುವವರೆಗೆ ನಾನು ಅದನ್ನು ಪುನಃ ಕಟ್ಟಿಸುವುದಿಲ್ಲ; ಅವನಿಗೆ ನಾನು ಅದನ್ನು ಒಪ್ಪಿಸುವೆನು.’</verse>
				<verse number="28">“ಮನುಷ್ಯಪುತ್ರನೇ, ನೀನು ಪ್ರವಾದಿಸಿ, ಸಾರ್ವಭೌಮ ಯೆಹೋವ ದೇವರು ಅಮ್ಮೋನಿಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾರೆ, ‘ಹೌದು, ನೀನು ಹೀಗೆ ಹೇಳು: “ ‘ಒಂದು ಖಡ್ಗವು, ಒಂದು ಖಡ್ಗವು ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಬಹಳವಾಗಿ ಮಸೆಯಲಾಗಿದೆ. ಥಳಥಳಿಸುತ್ತಾ ನುಂಗುವಹಾಗಿದೆ.</verse>
				<verse number="29">ನಿನ್ನ ಜೋಯಿಸರು ವ್ಯರ್ಥವಾದದ್ದನ್ನು ನೋಡಿ, ಸಾಕ್ಷಾತ್ಕರಿಸಿ ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಹೀಗೆ ನಿನ್ನನ್ನು ಹತರಾದ ದುಷ್ಟರ ಕುತ್ತಿಗೆಗಳ ಮೇಲೆ ತಂದಿದ್ದಾರೆ. ಅವರ ಅಂತ್ಯದಿನವು ಬಂದಿದೆ. ಅದೇ ಅವರ ಅಕ್ರಮಗಳಿಗೆ ಅಂತ್ಯವಾಗಿದೆ.</verse>
				<verse number="30">“ ‘ಖಡ್ಗವನ್ನು ಒರೆಗೆ ಸೇರಿಸು, ನೀನು ಸೃಷ್ಟಿಯಾದ ಸ್ಥಳದಲ್ಲಿಯೇ ನಿನ್ನ ಪೂರ್ವಜರ ನಾಡಿನಲ್ಲಿಯೇ ನಿನಗೆ ನ್ಯಾಯತೀರಿಸುವೆನು.</verse>
				<verse number="31">ನನ್ನ ಕ್ರೋಧವನ್ನು ನಿನ್ನ ಮೇಲೆ ಸುರಿಸುವೆನು. ನನ್ನ ಉಗ್ರವಾದ ಬೆಂಕಿ ನಿನ್ನ ಮೇಲೆ ಊದಿ ನಾಶಪಡಿಸುವುದರಲ್ಲಿ ಗಟ್ಟಿಗರಾದ ಕ್ರೂರ ಜನರ ಕೈಗೆ ನಿನ್ನನ್ನು ಒಪ್ಪಿಸುವೆನು.</verse>
				<verse number="32">ನೀನು ಅಗ್ನಿಗೆ ಆಹುತಿಯಾಗುವೆ. ನಿನ್ನ ರಕ್ತವು ದೇಶದ ಮಧ್ಯದಲ್ಲೆಲ್ಲಾ ಇರುವುದು. ಇನ್ನು ಮೇಲೆ ನೀನು ಜ್ಞಾಪಕಕ್ಕೆ ಬರುವುದಿಲ್ಲವೆಂದು, ಯೆಹೋವ ದೇವರಾದ ನಾನೇ ಹೇಳಿದ್ದೇನೆ.’ ”</verse>
			</chapter>
			<chapter number="22">
				<verse number="1">ಯೆಹೋವ ದೇವರ ವಾಕ್ಯವು ನನಗೆ ಬಂದಿತು:</verse>
				<verse number="2">“ಮನುಷ್ಯಪುತ್ರನೇ, ಈಗ ನೀನು ನ್ಯಾಯತೀರಿಸುವೆಯಾ? ರಕ್ತಾಪರಾಧವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ? ಹಾಗಾದರೆ ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವೆ.</verse>
				<verse number="3">ಆಮೇಲೆ ನೀನು ಹೇಳಬೇಕಾದದ್ದೇನೆಂದರೆ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಪಟ್ಟಣವು ಅದರ ಮಧ್ಯದಲ್ಲಿ ಅದರ ದಂಡನೆಯ ಕಾಲ ಬರುವಂತೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧಮಾಡುವಂತೆ ತನ್ನಲ್ಲಿ ವಿಗ್ರಹ ಮಾಡಿಕೊಂಡಿದೆ.</verse>
				<verse number="4">ನೀನು ಚೆಲ್ಲಿದ ನಿನ್ನ ರಕ್ತದಿಂದ ನೀನು ಅಪರಾಧಿಯಾದೆ; ನೀನು ಮಾಡಿದ ನಿನ್ನ ವಿಗ್ರಹಗಳಿಂದ ನೀನು ಅಶುದ್ಧನಾದೆ; ನಿನ್ನ ದಿನಗಳನ್ನು ಸಮೀಪಿಸಿರುವೆ; ಮತ್ತು ನಿಮ್ಮ ವರ್ಷಗಳ ಅಂತ್ಯವು ಬಂದಿದೆ. ಆದ್ದರಿಂದ ನಿನ್ನನ್ನು ಇತರ ಜನಾಂಗಗಳಿಗೆ ನಾಚಿಕೆಯಾಗಿಯೂ, ಎಲ್ಲಾ ದೇಶಗಳಿಗೂ ನಿಂದೆಯಾಗಿಯೂ ಮಾಡಿದ್ದೇನೆ.</verse>
				<verse number="5">ಕುಖ್ಯಾತ ನಗರವೇ, ಬಹಳ ತೊಂದರೆಗೊಳಗಾದವಳೇ, ನಿನ್ನನ್ನು ಹತ್ತಿರದವರೂ, ದೂರದವರೂ ಅಪಹಾಸ್ಯ ಮಾಡುವರು.</verse>
				<verse number="6">“ ‘ಇಸ್ರಾಯೇಲಿನ ಅರಸರು ಪ್ರತಿಯೊಬ್ಬನು ತಮ್ಮ ತಮ್ಮ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾರೆ.</verse>
				<verse number="7">ನಿನ್ನಲ್ಲಿ ತಂದೆಯನ್ನೂ, ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ. ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ. ನಿನ್ನಲ್ಲಿ ದಿಕ್ಕಿಲ್ಲದವನನ್ನೂ, ವಿಧವೆಯನ್ನೂ ಪೀಡಿಸಿದ್ದಾರೆ.</verse>
				<verse number="8">ನೀನು ನನ್ನ ಪರಿಶುದ್ಧ ಸಂಗತಿಗಳನ್ನು ತಿರಸ್ಕರಿಸಿ, ನನ್ನ ಸಬ್ಬತ್ ದಿನಗಳನ್ನು ಅಪವಿತ್ರ ಪಡಿಸಿದ್ದಿ.</verse>
				<verse number="9">ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಚಾಡಿ ಹೇಳುವವರು ಇದ್ದಾರೆ; ಪರ್ವತಗಳ ಪೂಜಾಸ್ಥಳಗಳಲ್ಲಿ ತಿನ್ನುತ್ತಾರೆ; ನಿನ್ನಲ್ಲಿ ಅವರು ದ್ರೋಹವನ್ನು ಮಾಡಿದ್ದಾರೆ.</verse>
				<verse number="10">ನಿಮ್ಮಲ್ಲಿ ತಂದೆಯ ಹಾಸಿಗೆಯನ್ನು ಅವಮಾನಿಸುವವರು ಇದ್ದಾರೆ, ನಿನ್ನಲ್ಲಿ ಮುಟ್ಟಿನಿಂದ ಅಶುದ್ಧಳಾದವಳನ್ನು ಕೂಡಿದ್ದಾರೆ.</verse>
				<verse number="11">ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ಅಸಹ್ಯಕರವಾದದ್ದನ್ನು ಮಾಡಿದ್ದಾನೆ; ಮತ್ತೊಬ್ಬನು ಅತ್ಯಾಚಾರದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಮಾನಭಂಗಪಡಿಸಿದ್ದಾನೆ.</verse>
				<verse number="12">ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚ ತೆಗೆದುಕೊಂಡಿದ್ದಾರೆ. ಬಡ್ಡಿಯನ್ನು ಲಾಭವನ್ನೂ ತೆಗೆದುಕೊಂಡಿದ್ದಾರೆ. ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭ ಮಾಡಿಕೊಂಡಿದ್ದಾರೆ. ನನ್ನನ್ನು ಮರೆತುಬಿಟ್ಟಿದ್ದಾರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="13">“ ‘ಆದ್ದರಿಂದ ನೀನು ಮಾಡಿದ ಈ ದುರ್ಲಾಭದಿಂದಲೂ, ನಿನ್ನಲ್ಲಿರುವ ನಿನ್ನ ರಕ್ತಾಪರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.</verse>
				<verse number="14">ನಾನು ನಿನ್ನೊಳಗೆ ಕೆಲಸ ನಡೆಸುವ ದಿವಸಗಳಲ್ಲಿ ನಿನ್ನ ಹೃದಯವು ನಿಲ್ಲುವುದೋ? ನಿನ್ನ ಕೈಗಳು ಬಲವಾಗಿರುವುವೋ? ಯೆಹೋವ ದೇವರಾದ ನಾನೇ ಹೇಳಿದ್ದೇನೆ, ನಾನೇ ಅದನ್ನು ಮಾಡುವೆನು.</verse>
				<verse number="15">ನಿನ್ನನ್ನು ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು. ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು.</verse>
				<verse number="16">ಆಗ ನೀನು ಇತರ ಜನಾಂಗಗಳ ಮುಂದೆ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವಿ; ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ.’ ”</verse>
				<verse number="17">ಯೆಹೋವ ದೇವರ ವಾಕ್ಯವು ನನಗೆ ಬಂದಿತು:</verse>
				<verse number="18">“ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರು ನನಗೆ ಕಸದ ಹಾಗಾದರೂ, ಅವರೆಲ್ಲರೂ ಗುಹೆಯಲ್ಲಿರುವ ತಾಮ್ರ, ತವರ, ಕಬ್ಬಿಣದ ಹಾಗೆ ಇದ್ದಾರೆ. ಸೀಸದ ಮತ್ತು ಬೆಳ್ಳಿಯ ಕಸದ ಹಾಗೆಯೂ ಇದ್ದಾರೆ.</verse>
				<verse number="19">ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನೀವೆಲ್ಲರೂ ಕೆಟ್ಟವರಾಗಿರುವುದರಿಂದ ಇಗೋ, ನಾನು ನಿಮ್ಮನ್ನು ಯೆರೂಸಲೇಮಿನ ಮಧ್ಯಕ್ಕೆ ಕೂಡಿಸುತ್ತೇನೆ.</verse>
				<verse number="20">ಅವರು ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ ಮತ್ತು ತಗಡುಗಳನ್ನು ಹೇಗೆ ಒರೆಯೊಳಗೆ ಕೂಡಿಸಿ, ಅದಕ್ಕೆ ಬೆಂಕಿಯನ್ನು ಊದಿ ಕರಗಿಸುವರೋ, ಹಾಗೆಯೇ ನಾನು ನಿಮ್ಮನ್ನು ನನ್ನ ಕೋಪದಲ್ಲಿ ಮತ್ತು ನನ್ನ ರೋಷದಲ್ಲಿ ಒಟ್ಟುಗೂಡಿಸಿ ನಿಮ್ಮನ್ನು ನಗರದೊಳಗೆ ಹಾಕಿ ಕರಗಿಸುತ್ತೇನೆ.</verse>
				<verse number="21">ನಾನು ನಿಮ್ಮನ್ನು ಕೂಡಿಸಿ, ನನ್ನ ರೋಷದ ಬೆಂಕಿಯನ್ನು ನಿಮ್ಮ ಮೇಲೆ ಊದುವೆನು. ನೀವು ಅದರೊಳಗೆ ಕರಗಿಹೋಗುವಿರಿ.</verse>
				<verse number="22">ಬೆಳ್ಳಿಯು ಕುಲುಮೆಯಲ್ಲಿ ಕರಗುವ ಹಾಗೆ ನೀವು ನನ್ನ ರೋಷಾಗ್ನಿಯಲ್ಲಿ ಕರಗುವಿರಿ. ನಿನ್ನ ಮೇಲೆ ರೋಷಾಗ್ನಿಯನ್ನು ಸುರಿಸಿದವರು ಯೆಹೋವ ದೇವರಾದ ನಾನೇ ಎಂದು ನಿಮಗೆ ತಿಳಿಯುತ್ತದೆ.’ ”</verse>
				<verse number="23">ಯೆಹೋವ ದೇವರ ವಾಕ್ಯವು ಮತ್ತೆ ನನಗೆ ಬಂದಿತು,</verse>
				<verse number="24">“ಮನುಷ್ಯಪುತ್ರನೇ, ಅದಕ್ಕೆ ಹೀಗೆ ಹೇಳು, ‘ದೇವರ ರೌದ್ರದ ದಿವಸದಲ್ಲಿ ನೀನು ಶುದ್ಧಿಯಾಗದ ದೇಶವಾಗಿಯೂ, ಮಳೆಯಿಲ್ಲದ ದೇಶವಾಗಿಯೂ ಇರುವೆ.’</verse>
				<verse number="25">ಬೇಟೆಯನ್ನು ಸುಲಿದುಕೊಳ್ಳುವ ಗರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಅವಳ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ, ಸಂಪತ್ತನ್ನೂ, ಅಮೂಲ್ಯವಾದ ವಸ್ತುವನ್ನೂ ದೋಚಿಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ.</verse>
				<verse number="26">ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ. ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ. ಅವರು ಪರಿಶುದ್ಧವಾದದ್ದಕ್ಕೂ, ಅಪವಿತ್ರವಾದದ್ದಕ್ಕೂ ಬೇಧವೆಣಿಸಲಿಲ್ಲ. ಶುದ್ಧ, ಅಶುದ್ಧಗಳ ವ್ಯತ್ಯಾಸವಿಲ್ಲ ಎಂದು ಬೋಧಿಸಿದರು. ನನ್ನ ಸಬ್ಬತ್ ದಿನಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದ್ದರಿಂದ ನಾನು ಅವರಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.</verse>
				<verse number="27">ಅಲ್ಲಿಯ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ಪ್ರಾಣಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿದ್ದಾರೆ.</verse>
				<verse number="28">ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಯೆಹೋವ ದೇವರು ಮಾತನಾಡದಿದ್ದರೂ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ’ ಎಂದು ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ.</verse>
				<verse number="29">ದೇಶದ ಜನರು ಬಲಾತ್ಕಾರದಿಂದ ಸೂರೆಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ, ದರಿದ್ರರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯ ಕೊಡದೆ ವಿದೇಶಿಯರನ್ನು ಬಲಾತ್ಕಾರ ಪಡಿಸಿದ್ದಾರೆ.</verse>
				<verse number="30">“ಗೋಡೆಯನ್ನು ಕಟ್ಟಿ ನಾಡನ್ನು ನಾನು ಹಾಳುಮಾಡದಂತೆ ನಾಡಿನ ಪರವಾಗಿ ಪೌಳಿಗೋಡೆಯ ಬಿರುಕಿನಲ್ಲಿ ನಿಲ್ಲುವ ಒಬ್ಬ ಮನುಷ್ಯನನ್ನು ಅವರೊಳಗೆ ನಾನು ಹುಡುಕಿದೆನು. ಆದರೆ ಯಾರೂ ಸಿಕ್ಕಲಿಲ್ಲ.</verse>
				<verse number="31">ಆದ್ದರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ. ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ. ಅವರ ದುರ್ನಡತೆಯ ಹೊಣೆಯನ್ನು ಅವರ ತಲೆಗಳ ಮೇಲೆ ಹೊರಿಸಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”</verse>
			</chapter>
			<chapter number="23">
				<verse number="1">ಯೆಹೋವ ದೇವರ ವಾಕ್ಯವು ನನಗೆ ಬಂದಿತು,</verse>
				<verse number="2">“ಮನುಷ್ಯಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು;</verse>
				<verse number="3">ಅವರು ಈಜಿಪ್ಟಿನಲ್ಲಿ ವೇಶ್ಯೆ ಆದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲಾದವು; ಅವುಗಳ ತೊಟ್ಟುಗಳು ನಸುಕಲಾದವು.</verse>
				<verse number="4">ಅವರುಗಳ ಹೆಸರುಗಳೇನೆಂದರೆ ಒಹೊಲ ಎಂಬವಳು ದೊಡ್ಡವಳು. ಒಹೊಲೀಬ ಎಂಬವಳು ಚಿಕ್ಕವಳು. ಅವರು ನನ್ನವರಾಗಿದ್ದು ಪುತ್ರಪುತ್ರಿಯರನ್ನು ಹೆತ್ತರು; ಅವರ ಹೆಸರುಗಳಾದ ಒಹೊಲ ಎಂಬುದು ಸಮಾರ್ಯವು ಮತ್ತು ಒಹೊಲೀಬ ಎಂಬುದು ಯೆರೂಸಲೇಮು ಆಗಿದೆ.</verse>
				<verse number="5">“ಒಹೊಲಳು ಇನ್ನು ನನ್ನ ವಶವಾಗಿರುವಾಗಲೇ ವ್ಯಭಿಚಾರ ಮಾಡಿದಳು. ಅವಳು ತನ್ನ ಪ್ರಿಯರನ್ನು ತನ್ನ ನೆರೆಯವರಾದ ಅಸ್ಸೀರಿಯದವರನ್ನು,</verse>
				<verse number="6">ಅವರೆಲ್ಲರೂ ನೀಲಿ ಬಣ್ಣದಿಂದ ಹೊದಿಕೆಯಾದ ಯೋಧರೂ, ಅಧಿಕಾರಸ್ಥರೂ, ಅಪೇಕ್ಷಿಸತಕ್ಕ ಯೌವನಸ್ಥರೂ, ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರೂ ಆಗಿರುವ ಅಂಥವರನ್ನು ಮೋಹಿಸಿದಳು.</verse>
				<verse number="7">ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಸ್ಸೀರಿಯದಲ್ಲಿನ ಗಣ್ಯವ್ಯಕ್ತಿಗಳಾಗಿದ್ದರು. ಅವಳು ಯಾರನ್ನು ಮೋಹಿಸಿದಳೋ, ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರ ಪಡಿಸಿಕೊಂಡಳು.</verse>
				<verse number="8">ಅವಳು ಈಜಿಪ್ಟಿನಲ್ಲಿ ಇದ್ದಾಗಿನಿಂದಲೂ ವ್ಯಭಿಚಾರವನ್ನು ಬಿಡಲಿಲ್ಲ. ಅವಳ ಯೌವನದಲ್ಲಿ ಪುರುಷರು ಅವಳ ಸಂಗಡ ಮಲಗಿದರು. ಅವರೆಲ್ಲರೂ ಅವಳ ಕನ್ಯತ್ವದ ಸ್ತನಗಳನ್ನು ಒತ್ತಿ, ಅವಳ ಮೇಲೆ ವ್ಯಭಿಚಾರ ನಡೆಸಿದರು.</verse>
				<verse number="9">“ಆದ್ದರಿಂದ ನಾನು ಅವಳನ್ನು ಮೋಹಿಸಿದ ಅವಳ ಪ್ರಿಯರ ಕೈಗೆ ಅಸ್ಸೀರಿಯರ ಕೈಗೆ ಒಪ್ಪಿಸಿದೆನು.</verse>
				<verse number="10">ಅವರು ಅವಳ ಬೆತ್ತಲೆತನವನ್ನು ಬಯಲುಪಡಿಸಿದರು ಮತ್ತು ಅವಳ ಪುತ್ರರನ್ನೂ, ಅವಳ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು. ನ್ಯಾಯತೀರ್ಪು ಮಾಡುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು.</verse>
				<verse number="11">“ಅವಳ ಸಹೋದರಿ ಒಹೊಲೀಬಳು ಇದನ್ನು ನೋಡಿದಾಗ, ಅವಳಿಗಿಂತ ಅಧಿಕವಾಗಿ ಮೋಹಗೊಂಡಳು. ತನ್ನ ಸಹೋದರಿಯ ವ್ಯಭಿಚಾರಕ್ಕಿಂತಲೂ ಹೆಚ್ಚಾಗಿ ವ್ಯಭಿಚಾರಗಳನ್ನು ನಡೆಸಿದಳು.</verse>
				<verse number="12">ಅವಳು ಯೋಧರಾದ ಅಸ್ಸೀರಿಯರನ್ನೂ, ನಾಯಕರು ಮತ್ತು ಅಧಿಕಾರಸ್ಥರು ಗಂಭೀರವಾಗಿ ಉಡುಪು ಧರಿಸಿ ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರಾಗಿಯೂ, ಅಪೇಕ್ಷಿಸತಕ್ಕ ಯೌವನಸ್ಥರಾಗಿಯೂ ಇರುವಂಥವರನ್ನು ಮೋಹಿಸಿದಳು.</verse>
				<verse number="13">ಅವಳೂ ಅಪವಿತ್ರಳಾದದ್ದನ್ನು ಕಂಡೆನು. ಅವರಿಬ್ಬರು ಒಂದೇ ಮಾರ್ಗವನ್ನು ಹಿಡಿದರು.</verse>
				<verse number="14">“ಅವಳು ತನ್ನ ವ್ಯಭಿಚಾರತ್ವವನ್ನು ಇನ್ನೂ ಹೆಚ್ಚಿಸಿದಳು. ಗೋಡೆಯ ಮೇಲೆ ಕೆಂಪು ಬಣ್ಣದಿಂದ ಚಿತ್ರಿಸಲಾದ ಕಸ್ದೀಯರ ಪುರುಷರನ್ನು ನೋಡಿದಳು. ಅವರು,</verse>
				<verse number="15">ಚಿತ್ರದಲ್ಲಿನ ಪುರುಷರು ತಮ್ಮ ಸೊಂಟದ ಸುತ್ತಲೂ ಪಟ್ಟಿಗಳನ್ನು ಕಟ್ಟಿಕೊಂಡಿದ್ದರು ಮತ್ತು ತಲೆಯ ಮೇಲೆ ಬೀಸುವ ಪೇಟಗಳನ್ನು ಹೊಂದಿದ್ದರು; ಅವರೆಲ್ಲರೂ ಬಾಬಿಲೋನ್ ನಿವಾಸಿಗಳಂತೆ, ಬಾಬಿಲೋನಿನ ರಥದ ಅಧಿಕಾರಿಗಳಂತೆ ಕಾಣುತ್ತಿದ್ದರು.</verse>
				<verse number="16">ಅವಳ ಕಣ್ಣುಗಳಿಂದ ಅವರನ್ನು ನೋಡಿದಾಗ ತಕ್ಷಣವೇ ಅವರನ್ನು ಮೋಹಿಸಿದಳು. ಅವರ ಬಳಿಗೆ ಕಸ್ದೀಯಕ್ಕೆ ದೂತರನ್ನು ಕಳುಹಿಸಿದಳು.</verse>
				<verse number="17">ಆಗ ಬಾಬಿಲೋನಿನವರು ಅವರ ಪ್ರೀತಿಯ ಹಾಸಿಗೆಯ ಮೇಲೆ ಬಂದು ಆಕೆಯನ್ನು ವ್ಯಭಿಚಾರದಿಂದ ಅಪವಿತ್ರಪಡಿಸಿದರು. ಅವಳು ಅವರಿಂದ ಅಪವಿತ್ರಳಾದ ಮೇಲೆ ಅವರ ಬಗ್ಗೆ ಇವಳಿಗೇ ಜಿಗುಪ್ಸೆ ಹುಟ್ಟಿತು.</verse>
				<verse number="18">ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನ್ನು ಬಯಲು ಪಡಿಸಿಕೊಂಡಾಗ, ತನ್ನ ಜಿಗುಪ್ಸೆ ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು.</verse>
				<verse number="19">ಆದರೂ ಅವಳು ಈಜಿಪ್ಟ್ ದೇಶದಲ್ಲಿ ವ್ಯಭಿಚಾರ ಮಾಡಿದಾಗ ತನ್ನ ಯೌವನದ ದಿನಗಳನ್ನು ಜ್ಞಾಪಕಮಾಡಿಕೊಂಡು ತನ್ನ ವ್ಯಭಿಚಾರವನ್ನು ಹೆಚ್ಚಿಸಿದಳು.</verse>
				<verse number="20">ಕತ್ತೆಗಳಂತೆ ಬೆದೆಯುಳ್ಳವರು ಕುದುರೆಗಳಂತೆ ದಾಟುವವರು ಆದ ತನ್ನ ಪ್ರಿಯರನ್ನು ಮೋಹಿಸಿದಳು.</verse>
				<verse number="21">ಹೀಗೆ ಈಜಿಪ್ಟಿನಿಂದ ನಿನ್ನ ಯೌವನದ ಸ್ತನಗಳ ತೊಟ್ಟುಗಳನ್ನು ಬತ್ತಿಸಿಕೊಂಡು ನಿನ್ನ ಯೌವನದ ದುಷ್ಕರ್ಮವನ್ನು ನೆನಪಿಗೆ ತಂದುಕೋ.</verse>
				<verse number="22">“ಆದ್ದರಿಂದ ಒಹೊಲೀಬಳೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ಯಾರಿಂದ ನಿನ್ನ ಮನಸ್ಸಿನಲ್ಲಿ ಜಿಗುಪ್ಸೆ ಹುಟ್ಟಿತೋ ಆ ನಿನ್ನ ಪ್ರಿಯನನ್ನು ನಾನು ನಿನಗೆ ವಿರೋಧವಾಗಿ ಎಬ್ಬಿಸುತ್ತೇನೆ. ನಾನು ಅವರನ್ನು ಪ್ರತಿಯೊಂದು ಕಡೆಯಲ್ಲಿಯೂ ವಿರೋಧವಾಗಿ ತರುತ್ತೇನೆ.</verse>
				<verse number="23">ಬಾಬಿಲೋನಿನವರು ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು, ಕೋಯದವರು, ಎಲ್ಲಾ ಅಸ್ಸೀರಿಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿ ಹೊಂದಿದವರೂ ಎಲ್ಲರೂ ಕುದುರೆಗಳ ಮೇಲೆ ಬೀಳುವಂತೆ ಮಾಡುವೆನು.</verse>
				<verse number="24">ಅವರು ರಥಗಳ ಸಂಗಡವಾಗಿಯೂ ಬಂಡಿಗಳ ಸಂಗಡವಾಗಿಯೂ ಜನಗಳ ಸಮೂಹದ ಸಂಗಡವಾಗಿಯೂ ಬಲವುಳ್ಳವರಾಗಿ ತಮ್ಮ ಆಯುಧಗಳೊಂದಿಗೆ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣವನ್ನೂ ಹಿಡಿದು ನಿನಗೆ ವಿರುದ್ಧವಾಗಿರುವೆನು. ಇದಲ್ಲದೆ ನಾನು ಅವರಿಗೆ ನ್ಯಾಯತೀರ್ಪಿನ ಅಧಿಕಾರ ಕೊಡುವೆನು. ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು.</verse>
				<verse number="25">ನನ್ನ ಅಸೂಯೆಯನ್ನು ನಿನಗೆ ವಿರುದ್ಧವಾಗಿ ಬರಮಾಡುವೆನು. ಅವರು ನಿನ್ನಲ್ಲಿ ಕೋಪ ತೀರಿಸಿಕೊಳ್ಳುವರು. ನಿನ್ನ ಮೂಗನ್ನೂ ಕಿವಿಗಳನ್ನೂ ತೆಗೆದುಹಾಕು; ನಿನ್ನಲ್ಲಿ ಉಳಿದವರು ಖಡ್ಗದಿಂದ ಬೀಳುವರು. ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನಲ್ಲಿ ಉಳಿದವರೆಲ್ಲರೂ ಅಗ್ನಿಗೆ ಆಹುತಿಯಾಗುವರು.</verse>
				<verse number="26">ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಒಡವೆಗಳನ್ನು ಕಸಿದುಕೊಳ್ಳುವರು.</verse>
				<verse number="27">ಹೀಗೆ ನಾನು ನಿನ್ನ ದುಷ್ಕರ್ಮವನ್ನು ನೀನು ಈಜಿಪ್ಟಿನಲ್ಲಿ ಇದ್ದಂದಿನಿಂದ ನಡೆಸಿದ ವ್ಯಭಿಚಾರವನ್ನು ನಿನ್ನಿಂದ ತೊಲಗಿಸುವೆನು. ಆಮೇಲೆ ನೀನು ಅವರ ಕಡೆಗೆ ಕಣ್ಣೆತ್ತದೆ, ಈಜಿಪ್ಟನ್ನು ಜ್ಞಾಪಕಕ್ಕೆ ತರದೇ ಇರುವೆ.</verse>
				<verse number="28">“ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಹಗೆಮಾಡುವವರ ಕೈಯಲ್ಲಿಯೂ ಯಾರ ಕಡೆಯಿಂದ ನಿನ್ನ ಮನಸ್ಸು ಕುಂದಿಹೋಯಿತೋ ಅವರ ಕೈಯಲ್ಲಿಯೂ ನಿನ್ನನ್ನು ಒಪ್ಪಿಸುತ್ತೇನೆ.</verse>
				<verse number="29">ಅವರು ನಿನ್ನ ವಿಷಯದಲ್ಲಿ ಹಗೆತೀರಿಸಿಕೊಳ್ಳುವರು. ನಿನ್ನ ಕಷ್ಟಾರ್ಜಿತವನ್ನು ತೆಗೆದುಕೊಂಡು ನಿನ್ನನ್ನು ಬೆತ್ತಲೆಯಾಗಿಯೂ ಬರಿದಾಗಿಯೂ ಮಾಡಿಬಿಡುವರು. ಆಗ ನಿನ್ನ ವ್ಯಭಿಚಾರವೂ ದುಷ್ಕರ್ಮವೂ ಜಾರತ್ವವೂ ಪ್ರಕಟವಾಗುವುದು.</verse>
				<verse number="30">ನೀನು ಇತರ ಜನಾಂಗಗಳ ಹಿಂದೆ ಹೋಗಿ ವ್ಯಭಿಚಾರ ಮಾಡಿದ್ದರಿಂದಲೂ ಅವರ ವಿಗ್ರಹಗಳಿಂದ ನಿನ್ನನ್ನು ಅಪವಿತ್ರ ಪಡಿಸಿಕೊಂಡಿದ್ದರಿಂದಲೂ ಇವುಗಳನ್ನು ನಿನಗೆ ಮಾಡುತ್ತೇನೆ.</verse>
				<verse number="31">ನೀನು ನಿನ್ನ ಸಹೋದರಿಯ ಮಾರ್ಗದಲ್ಲಿಯೇ ನಡೆದದ್ದರಿಂದ ಅವಳ ಪಾತ್ರೆಯನ್ನು ನಿನ್ನ ಕೈಗೆ ಕೊಡುತ್ತೇನೆ.</verse>
				<verse number="32">“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀನು ನಿನ್ನ ಸಹೋದರಿಯ ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವೆ. ನೀನು ಹಾಸ್ಯಕ್ಕೂ ನಿಂದೆಗೂ ಗುರಿಯಾಗುವೆ. ಅದೇ ನಿನಗೆ ಹೆಚ್ಚಾಗುವುದು.</verse>
				<verse number="33">ನಿನ್ನ ಸಹೋದರಿಯಾದ ಸಮಾರ್ಯದ ಪಾತ್ರೆಯಿಂದಲೇ ವಿಸ್ಮಯವೂ ನಾಶವೂ ಆಗುವುದು. ನೀನು ಮತ್ತಿನಿಂದಲೂ ದುಃಖದಿಂದಲೂ ತುಂಬಿರುವೆ.</verse>
				<verse number="34">ನೀನು ಅದರಲ್ಲಿ ಸ್ವಲ್ಪವೂ ಉಳಿಯದಂತೆ ಹೀರಿ ಕುಡಿದು ಅದನ್ನು ಬೋಕಿಗಳ ಹಾಗೆ ಒಡೆದುಹಾಕುವೆ ಮತ್ತು ನೀನೇ ನಿನ್ನ ಸ್ತನಗಳನ್ನು ಕಿತ್ತುಕೊಳ್ಳುವೆ; ಏಕೆಂದರೆ ನಾನೇ ಅದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ.</verse>
				<verse number="35">“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನನ್ನನ್ನು ಮರೆತುಬಿಟ್ಟು ನನ್ನನ್ನು ನಿನ್ನ ಬೆನ್ನಿನ ಮೇಲೆ ಮರೆಮಾಡಿದ ಮೇಲೆ ನೀನು ನಿನ್ನ ದುಷ್ಕರ್ಮವನ್ನೂ ವ್ಯಭಿಚಾರದ ಪ್ರತಿಫಲವನ್ನೂ ಅನುಭವಿಸಲೇಬೇಕು.”</verse>
				<verse number="36">ಯೆಹೋವ ದೇವರು ನನಗೆ ಹೀಗೆ ಹೇಳಿದರು: “ನರಪುತ್ರನೇ, ಒಹೊಲಳಿಗೂ ಒಹೊಲೀಬಳಿಗೂ ನ್ಯಾಯತೀರಿಸುವೆಯೋ? ಹೌದು, ಅವರ ಅಸಹ್ಯಕರ ಕೃತ್ಯಗಳನ್ನು ಅವರಿಗೆ ತಿಳಿಸು.</verse>
				<verse number="37">ಅವರು ವ್ಯಭಿಚಾರ ಮಾಡಿದ್ದಾರೆ, ರಕ್ತವು ಅವರ ಕೈಗಳಲ್ಲಿ ಇದೆ: ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ. ನನಗೆ ಹೆತ್ತ ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಕೊಟ್ಟಿದ್ದಾರೆ.</verse>
				<verse number="38">ಇದನ್ನು ಮಾಡಿದ ದಿನದಲ್ಲಿಯೇ ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರಪಡಿಸಿ ನನ್ನ ವಿಶ್ರಾಂತಿಯ ದಿನಗಳನ್ನು ಕೆಡಿಸಿದ್ದಾರೆ.</verse>
				<verse number="39">ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದುಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವುದಕ್ಕೆ ಬಂದರು. ಅವರು ನನ್ನ ಆಲಯದ ಒಳಗೆ ಹೀಗೆ ಮಾಡಿದ್ದಾರೆ.</verse>
				<verse number="40">“ದೂತನನ್ನು ಕಳುಹಿಸಿ ದೂರದಿಂದ ಬರಬೇಕೆಂದು ಮನುಷ್ಯರಿಗೆ ಕರೆಯ ಕಳುಹಿಸಿದ್ದಾರೆ. ಅವರು ಬಂದಾಗ ಅವರಿಗಾಗಿ ನೀನು ಸ್ನಾನಮಾಡಿ ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು ನಿನ್ನ ಆಭರಣಗಳಿಂದ ಅಲಂಕರಿಸಿಕೊಂಡೆ.</verse>
				<verse number="41">ವೈಭವದ ಮಂಚದ ಮೇಲೆ ಕುಳಿತುಕೊಂಡೆ. ಅವರ ಮುಂದೆ ನನ್ನ ಧೂಪವನ್ನು ನನ್ನ ಎಣ್ಣೆಯನ್ನು ಇಟ್ಟಿದ್ದ ಮೇಜನ್ನು ಸಿದ್ಧಮಾಡಿದೆ.</verse>
				<verse number="42">“ಅವಳ ಸಂಗಡ ವಿನೋದಪ್ರಿಯ ಸಮೂಹದ ಶಬ್ದವು ಇತ್ತು. ಸಾಧಾರಣ ಮನುಷ್ಯರ ಸಂಗಡ ಮರುಭೂಮಿಯಿಂದ ಕುಡುಕರನ್ನೂ ಕರೆಯಿಸಿಕೊಂಡು ಆ ಮಹಿಳೆ ಮತ್ತು ಅವಳ ಸಹೋದರಿಯ ಕೈಗಳ ಮೇಲೆ ಕಡಗಳನ್ನೂ ತಮ್ಮ ತಲೆಗಳ ಮೇಲೆ ಶೃಂಗಾರವಾದ ಕಿರೀಟವನ್ನೂ ಇಟ್ಟರು.</verse>
				<verse number="43">ಆಮೇಲೆ ನಾನು ಅವಳಿಗೆ ಹೇಳಿದ್ದೇನೆಂದರೆ, ‘ವ್ಯಭಿಚಾರದಿಂದ ಸವೆದು ಹೋದವಳು ಅವಳೇ, ಮತ್ತೆ ಅವರು ಅವಳ ಸಂಗಡ ವ್ಯಭಿಚರಿಸಬಹುದೇ?’</verse>
				<verse number="44">ಆದರೂ ವ್ಯಭಿಚಾರಿಣಿಯನ್ನು ಸೇರುವ ಹಾಗೆ ಅವರು ಅವಳನ್ನು ಸೇರಿದರು. ಹಾಗೆಯೇ ದುಷ್ಕರ್ಮಿ ಸ್ತ್ರೀಯರಾದ ಒಹೊಲಳ ಬಳಿಗೂ ಒಹೊಲೀಬಳ ಬಳಿಗೂ ಹೋದರು.</verse>
				<verse number="45">ನೀತಿಯುಳ್ಳ ನ್ಯಾಯಾಧೀಶರು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಸುರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು. ಏಕೆಂದರೆ ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತವಾಗಿದೆ.</verse>
				<verse number="46">“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ, ಅವರನ್ನು ಸೂರೆಗೂ ಹೆದರಿಕೆಗೂ ಒಪ್ಪಿಸುವೆನು.</verse>
				<verse number="47">ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಖಡ್ಗಗಳಿಂದ ಕೊಯ್ದು ಅವರ ಪುತ್ರರನ್ನೂ ಪುತ್ರಿಯರನ್ನೂ ಕೊಂದುಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟುಬಿಡುವರು.</verse>
				<verse number="48">“ಹೀಗೆ ಸ್ತ್ರೀಯರೆಲ್ಲರೂ ನಿಮ್ಮ ದುಷ್ಕರ್ಮದ ಪ್ರಕಾರ ಮಾಡದಿರಲೆಂದು ಅವರಿಗೆ ಬೋಧಿಸಿ ದೇಶದೊಳಗಿಂದ ದುಷ್ಕರ್ಮವನ್ನು ತೆಗೆದುಹಾಕುವೆನು.</verse>
				<verse number="49">ನಿಮ್ಮ ದುಷ್ಕರ್ಮದ ಫಲವನ್ನು ನೀವೇ ಅನುಭವಿಸುವಂತೆ ಮಾಡುವೆ. ನೀವು ನಿಮ್ಮ ವಿಗ್ರಹಗಳ ಆರಾಧನೆಯಿಂದಾದ ಪಾಪಗಳನ್ನು ಹೊರುವಿರಿ. ಆಗ ಸಾರ್ವಭೌಮ ಯೆಹೋವ ದೇವರು ನಾನೇ ಎಂದು ತಿಳಿದುಕೊಳ್ಳುವಿರಿ.”</verse>
			</chapter>
			<chapter number="24">
				<verse number="1">ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು:</verse>
				<verse number="2">“ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ. ಅದೇ ದಿನದಲ್ಲಿ ಬಾಬಿಲೋನಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ.</verse>
				<verse number="3">ದಂಗೆಕೋರ ಮನೆತನದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಹಂಡೆಯನ್ನು ಒಲೆಯ ಮೇಲಿಡು, ಮೇಲಿಟ್ಟು ಅದರಲ್ಲಿ ನೀರನ್ನು ಸುರಿ.</verse>
				<verse number="4">ಮಾಂಸದ ತುಂಡುಗಳನ್ನೂ ತೊಡೆಯನ್ನೂ ಹೆಗಲನ್ನೂ ಎಲ್ಲಾ ಒಳ್ಳೆಯ ತುಂಡುಗಳನ್ನೂ ಒಟ್ಟಿಗೆ ಸೇರಿಸಿ ಒಳ್ಳೆಯ ಎಲುಬುಗಳ ಜೊತೆ ಅದನ್ನು ತುಂಬಿಸು.</verse>
				<verse number="5">ಹಿಂಡಿನಲ್ಲಿ ಶ್ರೇಷ್ಠವಾದದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ.</verse>
				<verse number="6">“ ‘ಆದಕಾರಣ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ರಕ್ತಮಯವಾದ ಆ ಪಟ್ಟಣಕ್ಕೆ ಕಷ್ಟ! ಯಾವುದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವುದೋ ಆ ಹಂಡೆಗೆ ಕಷ್ಟ! ಅದರಿಂದ ತುಂಡುತುಂಡಾಗಿ ಹೊರಗೆ ತೆಗೆ. ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ.</verse>
				<verse number="7">“ ‘ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.</verse>
				<verse number="8">ಮುಯ್ಯಿಗೆ ಮುಯ್ಯಿ ತೀರಿಸುವುದಕ್ಕೆ ರೋಷವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿ ಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿದ್ದೇನೆ.</verse>
				<verse number="9">“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಆ ರಕ್ತಾಪರಾಧವುಳ್ಳ ಪಟ್ಟಣಕ್ಕೆ ಕಷ್ಟ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.</verse>
				<verse number="10">ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸವನ್ನು ಚೆನ್ನಾಗಿ ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಎಲುಬುಗಳು ಸುಡಲಿ.</verse>
				<verse number="11">ಆಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ, ಒಳಗಣ ಕಲ್ಮಶವು ಕರಗಿ ಕಿಲುಬು ಇಲ್ಲವಾಗುವಂತೆ ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.</verse>
				<verse number="12">ಅದರ ಕಲ್ಮಶವು ನನ್ನಲ್ಲಿ ಆಯಾಸವನ್ನುಂಟು ಮಾಡೀತೆ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ. ಅದು ಬೆಂಕಿಯಿಂದಲೂ ನೀಗಲಿಲ್ಲ.</verse>
				<verse number="13">“ ‘ನಿನ್ನ ಅಶುದ್ಧತ್ವವು ದುಷ್ಕರ್ಮವುಳ್ಳದ್ದು. ನಾನು ನಿನ್ನನ್ನು ಪರಿಶುದ್ಧಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರದಿಂದ ಇನ್ನು ಶುದ್ಧವಾಗುವುದಿಲ್ಲ.</verse>
				<verse number="14">“ ‘ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ. ನಾನು ಕೆಲಸ ಮಾಡುವ ಸಮಯ ಬಂದಿದೆ. ನಾನು ಅದನ್ನು ಮಾಡದೆ ಬಿಡುವುದಿಲ್ಲ. ಕಟಾಕ್ಷ ತೋರಿಸುವುದಿಲ್ಲ. ಹಿಂದೆಗೆಯೆನು. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯತೀರಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”</verse>
				<verse number="15">ಯೆಹೋವ ದೇವರ ವಾಕ್ಯವು ನನಗೆ ಬಂದಿತು:</verse>
				<verse number="16">“ಮನುಷ್ಯಪುತ್ರನೇ, ಒಂದೇ ಏಟಿನಿಂದ ನೇತ್ರಾನಂದವಾಗಿರುವುದನ್ನು ನಿನ್ನಿಂದ ತೆಗೆಯುತ್ತೇನೆ. ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ.</verse>
				<verse number="17">ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖ ತೋರಿಸಬೇಡ. ಮುಂಡಾಸವನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ನಿನ್ನ ಮೀಸೆ ಮತ್ತು ಗಡ್ಡವನ್ನು ಮುಚ್ಚಿಕೊಳ್ಳಬೇಡ, ದುಃಖಿಸುವವರ ಸಾಂಪ್ರದಾಯಿಕ ಆಹಾರವನ್ನು ತಿನ್ನಬೇಡಿರಿ.”</verse>
				<verse number="18">ಹಾಗೆಯೇ ನಾನು ಬೆಳಗಿನ ಜಾವದಲ್ಲಿ ಜನರೊಂದಿಗೆ ಮಾತನಾಡಿದೆನು. ಸಂಜೆ ನನ್ನ ಹೆಂಡತಿ ಸತ್ತಳು. ಮರುದಿನ ಬೆಳಿಗ್ಗೆ ನಾನು ಆಜ್ಞಾಪಿಸಿದಂತೆ ಮಾಡಿದೆನು.</verse>
				<verse number="19">ಆಗ ಜನರು, “ನೀನು ಮಾಡುವ ಆ ಸಂಗತಿಗಳಿಂದ ನಮಗೆ ಪ್ರಯೋಜನವೇನೆಂದು ತಿಳಿಸುವುದಿಲ್ಲವೇ? ಯಾಕೆ ಹೀಗೆ ವರ್ತಿಸುತ್ತಿದ್ದೀಯಾ?” ಎಂದು ಕೇಳಿದರು.</verse>
				<verse number="20">ಆದ್ದರಿಂದ ನಾನು ಅವರಿಗೆ ಹೀಗೆ ಹೇಳಿದೆನು, “ಯೆಹೋವ ದೇವರ ವಾಕ್ಯವು ನನಗೆ ಬಂದಿತು,</verse>
				<verse number="21">ಇಸ್ರಾಯೇಲರ ಮನೆತನದವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ ಎಂದು ಹೇಳು: ಇಗೋ, ನಾನು ನನ್ನ ಪವಿತ್ರಾಲಯವನ್ನೂ, ನಿಮ್ಮ ಮುಖ್ಯಬಲವನ್ನೂ, ನಿಮ್ಮ ನೇತ್ರಾನಂದಕರವಾದದ್ದನ್ನೂ, ನಿಮ್ಮ ಮನಸ್ಸು ಅಭಿಲಾಷಿಸುವುದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳು ಖಡ್ಗದಿಂದ ಬೀಳುವರು.</verse>
				<verse number="22">ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ಮೀಸೆ ಮತ್ತು ಗಡ್ಡವನ್ನು ಮುಚ್ಚಿಕೊಳ್ಳುವುದಿಲ್ಲ ಅಥವಾ ದುಃಖಿಸುವವರ ಸಾಂಪ್ರದಾಯಿಕ ಆಹಾರವನ್ನು ತಿನ್ನುವುದಿಲ್ಲ.</verse>
				<verse number="23">ನಿಮ್ಮ ಮುಂಡಾಸಗಳು ನಿಮ್ಮ ತಲೆಯ ಮೇಲೆಯೂ ನಿಮ್ಮ ಪಾದರಕ್ಷೆಯು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವುವು. ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರಳುವಿರಿ.</verse>
				<verse number="24">ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾಗಿರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವು ಮಾಡುವಿರಿ. ಈ ರೀತಿ ಆದಾಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ತಿಳಿಯುವಿರಿ.’</verse>
				<verse number="25">“ಮನುಷ್ಯಪುತ್ರನೇ, ಅವರ ಮಹತ್ತರ ಸಂತೋಷವನ್ನೂ ಅವರ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವುದನ್ನೂ ಅವರ ಪುತ್ರಪುತ್ರಿಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ ದಿನದಲ್ಲಿ,</verse>
				<verse number="26">ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಕಿವಿಗಳಿಗೆ ಸುದ್ದಿಯನ್ನು ತರುವ ಹಾಗೆ ನಿನ್ನ ಬಳಿಗೆ ಬರುವನಲ್ಲವೆ?</verse>
				<verse number="27">ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿ ತೆರೆದಿರುವುದು. ನೀನು ಇನ್ನು ಮೂಕನಾಗಿರದೆ ಮಾತನಾಡುವೆ ಮತ್ತು ಅವರಿಗೆ ಗುರುತಾಗಿರುವೆ, ಆಗ ನಾನೇ ಯೆಹೋವ ದೇವರೆಂದು ತಿಳಿಯುವರು.”</verse>
			</chapter>
			<chapter number="25">
				<verse number="1">ಯೆಹೋವ ದೇವರ ವಾಕ್ಯವು ನನಗೆ ಬಂದಿತು,</verse>
				<verse number="2">“ಮನುಷ್ಯಪುತ್ರನೇ, ನೀನು ಅಮ್ಮೋನ್ಯರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು.</verse>
				<verse number="3">ಅಮ್ಮೋನ್ಯರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನೀವು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಪಡಿಸಿದಾಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ನೀವು “ಆಹಾ!” ಅಂದದ್ದರಿಂದ</verse>
				<verse number="4">ನಾನು ನಿಮ್ಮನ್ನು ಪೂರ್ವದೇಶದ ಜನರಿಗೆ ಸೊತ್ತಾಗಿ ಕೊಡುತ್ತೇನೆ, ಅವರು ತಮ್ಮ ಗುಡಾರಗಳನ್ನು ನಿನ್ನಲ್ಲಿ ನೆಲೆಗೊಳಿಸುವರು. ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿಮ್ಮ ಫಲವನ್ನು ತಿಂದು ನಿಮ್ಮ ಹಾಲನ್ನೇ ಕುಡಿಯುವರು.</verse>
				<verse number="5">ನಾನು ರಬ್ಬಾ ಪಟ್ಟಣವನ್ನು ಒಂಟೆಗಳ ನಿವಾಸ ಸ್ಥಳವಾಗಿ ಮತ್ತು ಅಮ್ಮೋನ್ ದೇಶವನ್ನು ಮಂದೆಗಳು ಮಲಗುವ ಸ್ಥಳವನ್ನಾಗಿ ಮಾಡುವೆನು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.</verse>
				<verse number="6">ಏಕೆಂದರೆ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ನೀವು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶದವರನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಅದರ ಸ್ಥಿತಿಗೆ ಸಂತೋಷಪಟ್ಟದ್ದರಿಂದ,</verse>
				<verse number="7">ನಾನು ನನ್ನ ಕೈಯನ್ನು ನಿಮ್ಮ ಮೇಲೆ ಚಾಚಿ, ಇತರ ಜನಾಂಗಗಳಿಗೆ ಕೊಳ್ಳೆಯಾಗಿ ಕೊಟ್ಟು ಜನಾಂಗಗಳೊಳಗಿಂದ ನಿಮ್ಮನ್ನು ಕಡಿದುಬಿಟ್ಟು ದೇಶದೊಳಗಿಂದ ನಿನ್ನ ಹೆಸರನ್ನು ಅಳಿಸಿಬಿಡುವೆನು. ನಾನು ನಿಮ್ಮನ್ನು ನಾಶಮಾಡುವೆನು. ಆಗ ನಾನೇ ಯೆಹೋವ ದೇವರೆಂದು ತಿಳಿಯುವಿರಿ.’ ”</verse>
				<verse number="8">“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಮೋವಾಬು ಮತ್ತು ಸೇಯೀರು, “ಇಗೋ, ಯೆಹೂದನ ಮನೆಯು ಸಮಸ್ತ ಇತರ ಜನಾಂಗಗಳ ಹಾಗಿದೆ,” ಎಂದು ಹೇಳುವರು.</verse>
				<verse number="9">ಆದ್ದರಿಂದ ಇಗೋ, ದೇಶದ ವೈಭವಗಳಾದ ಮೋವಾಬಿನ ಗಡಿಯ ಪಟ್ಟಣಗಳಾದ ಬೇತ್ ಯೆಷೀಮೋತ್, ಬಾಳ್ ಮೆಯೋನ್, ಕಿರ್ಯಾತಯಿಮ್ ಎಂಬ ಪಟ್ಟಣಗಳು ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಡುವೆನು.</verse>
				<verse number="10">ಆ ಅಮ್ಮೋನನ್ನೂ ಪೂರ್ವದವರೆಗೆ ಸೊತ್ತಾಗಿ ಕೊಟ್ಟು ಅಮ್ಮೋನ್ಯರು ಜನಾಂಗಗಳೊಳಗೆ ಜ್ಞಾಪಕ ಮಾಡದ ಹಾಗೆ ಅವರಿಗೆ ಸೊತ್ತಾಗಿ ಕೊಡುವೆನು.</verse>
				<verse number="11">ಮೋವಾಬ್ಯರಿಗೆ ನಾನು ಶಿಕ್ಷೆಯನ್ನು ವಿಧಿಸುವೆನು. ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”</verse>
				<verse number="12">“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಏಕೆಂದರೆ ಎದೋಮು ಯೆಹೂದನ ಮನೆತನದವರಿಗೆ ಮುಯ್ಯಿಗೆ ಮುಯ್ಯಿ ತೀರಿಸಿದ್ದರಿಂದ ಅತಿ ಅಪರಾಧಮಾಡಿ ಅವರಲ್ಲಿ ಸೇಡು ತೀರಿಸಿಕೊಂಡಿತು.</verse>
				<verse number="13">ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಎದೋಮಿನ ವಿರುದ್ಧ ನನ್ನ ಕೈಯನ್ನು ಚಾಚುತ್ತೇನೆ: ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ. ಅದನ್ನು ಕಾಡನ್ನಾಗಿ ಮಾಡುತ್ತೇನೆ, ತೇಮಾನು ಮೊದಲುಗೊಂಡು ದೆದಾನಿಯವರು ಖಡ್ಗದಿಂದ ಬೀಳುವರು.</verse>
				<verse number="14">ನಾನು ಎದೋಮಿಗೆ ನನ್ನ ಜನರಾದ ಇಸ್ರಾಯೇಲರ ಕೈಯಿಂದ ಮುಯ್ಯಿತೀರಿಸುವೆನು, ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು, ನನ್ನ ಪ್ರತೀಕಾರವು ಎದೋಮಿನ ಅನುಭವಕ್ಕೆ ಬರುವುದು, ಇದು ಸಾರ್ವಭೌಮ ಯೆಹೋವ ದೇವರ ನುಡಿ.’ ”</verse>
				<verse number="15">“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ತೀರಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಯೆಹೂದವನ್ನು ಕೆಡಿಸಿದರು.</verse>
				<verse number="16">ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಫಿಲಿಷ್ಟಿಯರ ವಿರುದ್ಧ ನನ್ನ ಕೈಯನ್ನು ಚಾಚುವೆನು. ಕೆರೇತಿಯರನ್ನು ಕಡಿದುಬಿಡುವೆನು: ಉಳಿದವರನ್ನು ಸಮುದ್ರ ತೀರದಲ್ಲಿ ನಾಶಮಾಡುವೆನು.</verse>
				<verse number="17">ನಾನು ದೊಡ್ಡ ಪ್ರತಿದಂಡನೆಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ಮುಯ್ಯಿತೀರಿಸುವೆನು. ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”</verse>
			</chapter>
			<chapter number="26">
				<verse number="1">ಹನ್ನೊಂದನೆಯ ವರ್ಷ, ತಿಂಗಳಿನ ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು.</verse>
				<verse number="2">“ಮನುಷ್ಯಪುತ್ರನೇ, ಟೈರ್, ಯೆರೂಸಲೇಮಿನ ವಿಷಯವಾಗಿ, ‘ಆಹಾ, ಜನರ ದ್ವಾರವಾಗಿದ್ದದ್ದು ಮುರಿದುಹೋಯಿತು, ಅದು ನನ್ನ ಕಡೆಗೆ ತೆರೆದುಕೊಂಡಿದೆ. ಯೆರೂಸಲೇಮು ಹಾಳಾದದ್ದರಿಂದ ನಾನು ವೃದ್ಧಿಗೊಳ್ಳುವೆನು,’</verse>
				<verse number="3">ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಟೈರ್ ದೇಶವೇ, ನಾನು ನಿನಗೆ ವಿರೋಧವಾಗಿದ್ದೇನೆ, ಸಮುದ್ರವು ತನ್ನ ಅಲೆಗಳನ್ನು ಹೇಗೆ ಬರಮಾಡುವುದೋ ಹಾಗೆಯೇ ನಾನು ನಿನಗೆ ವಿರೋಧವಾಗಿ ಅನೇಕ ಜನಾಂಗಗಳನ್ನು ನಿನ್ನ ಮೇಲೆ ಬರಮಾಡುವೆನು.</verse>
				<verse number="4">ಅವರು ಟೈರಿನ ಗೋಡೆಗಳನ್ನು ಕೆಡಿಸಿ ಅದರ ಗೋಪುರಗಳನ್ನು ಒಡೆದು ಬಿಡುವರು, ನಾನು ಅದರ ಧೂಳನ್ನು ಒರಸಿ ಅದನ್ನು ಬೋಳು ಬಂಡೆಯಂತೆ ಮಾಡುವೆನು.</verse>
				<verse number="5">ಅದು ಸಮುದ್ರದ ಮಧ್ಯದಲ್ಲಿ ಬಲೆಗಳನ್ನು ಹಾಕುವ ಸ್ಥಳವಾಗಿರುವುದು. ನಾನೇ ಅದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅದು ಜನಾಂಗಗಳಿಗೆ ಕೊಳ್ಳೆಯಾಗಿರುವುದು,</verse>
				<verse number="6">ಮತ್ತು ಪ್ರಧಾನ ಭೂಮಿಯಲ್ಲಿರುವ ಅದರ ಪುತ್ರಿಯರು ಖಡ್ಗದಿಂದ ಹತರಾಗುವರು. ಆಗ ನಾನೇ ಯೆಹೋವ ದೇವರೆಂದು ಎಲ್ಲರಿಗೂ ತಿಳಿಯುವುದು.</verse>
				<verse number="7">“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ಉತ್ತರದ ರಾಜಾಧಿರಾಜನೂ ಬಾಬಿಲೋನಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡವೂ ಸವಾರರ ಸಂಗಡವೂ ರಥಗಳ ಸಂಗಡವೂ ಬಹುಜನರ ಸಂಗಡವೂ ಟೈರಿನ ಮೇಲೆ ತರುತ್ತೇನೆ.</verse>
				<verse number="8">ಅವನು ಪ್ರಧಾನ ಭೂಮಿಯಲ್ಲಿನ ನಿನ್ನ ಪುತ್ರಿಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಗುರಾಣಿಯನ್ನು ಎತ್ತುವನು.</verse>
				<verse number="9">ತನ್ನ ಯುದ್ಧ ಯಂತ್ರಗಳನ್ನು ನಿನ್ನ ಗೋಡೆಗಳಿಗೆ ತಾಕಿಸುವನು. ತನ್ನ ಆಯುಧಗಳಿಂದ ನಿನ್ನ ಗೋಪುರಗಳನ್ನು ಕೆಡವಿಬಿಡುವನು.</verse>
				<verse number="10">ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಸುಕುವದು, ಒಡಕು ಬಿದ್ದ ಕೋಟೆಯೊಳಗೆ ಶತ್ರುಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲುಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವುವು.</verse>
				<verse number="11">ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನೆಲ್ಲಾ ತುಳಿಸುವನು; ನಿನ್ನ ಜನರನ್ನು ಖಡ್ಗದಿಂದ ಕೊಲ್ಲುವನು; ನಿನ್ನ ಬಲವಾದ ಕಂಬಗಳು ನೆಲಕ್ಕೆ ಬೀಳುವುವು.</verse>
				<verse number="12">ಅವರು ನಿನ್ನ ಸಂಪತ್ತನ್ನು ಕಸಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಒಡೆದು, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ ನಿನ್ನ ಮರಗಳನ್ನೂ ಧೂಳನ್ನೂ ನೀರಿನಲ್ಲಿ ಹಾಕುವರು.</verse>
				<verse number="13">ಆಗ ನಿನ್ನ ಹಾಡುಗಳ ಶಬ್ದವನ್ನು ನಿಲ್ಲಿಸುವೆನು. ನಿನ್ನ ಕಿನ್ನರಿಗಳ ಧ್ವನಿ ಇನ್ನು ಕೇಳಿಸುವುದಿಲ್ಲ.</verse>
				<verse number="14">ನಿನ್ನನ್ನು ಬೋಳು ಬಂಡೆಯಂತೆ ಮಾಡುವೆನು. ನೀನು ಅಲ್ಲಿ ಬಲೆಹಾಸುವ ಸ್ಥಳವಾಗುವೆ. ನೀನು ಪುನಃ ಕಟ್ಟಲಾಗದೆ ಹೋಗುವಿ. ಯೆಹೋವ ದೇವರಾದ ನಾನೇ ಅದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="15">“ಸಾರ್ವಭೌಮ ಯೆಹೋವ ದೇವರು ಟೈರಿಗೆ ಹೀಗೆ ಹೇಳುತ್ತಾರೆ: ನಿನ್ನ ಪತನದ ಶಬ್ದಕ್ಕೂ, ಗಾಯಪಟ್ಟವರು ಕೂಗುವಾಗಲೂ, ನಿನ್ನ ಮಧ್ಯದಲ್ಲಿ ಕೊಲೆಯಾಗುವಾಗಲೂ ಸಮುದ್ರತೀರದ ಪ್ರದೇಶಗಳು ನಡುಗುವುದಿಲ್ಲವೇ?</verse>
				<verse number="16">ಆಮೇಲೆ ಸಮುದ್ರತೀರದ ಎಲ್ಲಾ ರಾಜಕುಮಾರರು ತಮ್ಮ ಸಿಂಹಾಸನಗಳನ್ನು ಬಿಟ್ಟು ಇಳಿಯುವರು; ತಮ್ಮ ನಿಲುವಂಗಿಗಳನ್ನು ತೆಗೆದುಹಾಕುವರು, ಕಸೂತಿ ಕೆಲಸದಿಂದ ಹೊಲಿದ ತಮ್ಮ ವಸ್ತ್ರಗಳನ್ನು ಇಟ್ಟುಬಿಡುವರು. ನಡುಗುವಿಕೆಯನ್ನು ಹೊದ್ದುಕೊಳ್ಳುವರು; ನೆಲದ ಮೇಲೆ ಕುಳಿತುಕೊಳ್ಳುವರು, ಕ್ಷಣಕ್ಷಣಕ್ಕೂ ನಡುಗುವರು, ನಿನ್ನ ವಿಷಯವಾಗಿ ಭಯಭೀತರಾದರು.</verse>
				<verse number="17">ನಿನ್ನ ವಿಷಯದಲ್ಲಿ ಗೋಳಾಟವನ್ನೆತ್ತಿ ನಿನಗೆ ಹೇಳುವುದೇನೆಂದರೆ: “ ‘ಸಮುದ್ರಗಳ ಬಳಿಯಲ್ಲಿ ವಾಸಿಸಿದವಳೇ, ಪ್ರಸಿದ್ಧ ಪಟ್ಟಣವೇ, ಸಮುದ್ರದ ಮೇಲೆ ಬಲಗೊಂಡ ನಗರವೇ, ಅದರ ಸಮುದ್ರ ಸಂಚಾರವನ್ನೂ ಭಯಪಡಿಸಿದವಳೇ, ಅಯ್ಯೋ, ಹೇಗೆ ನಾಶವಾದೆ?</verse>
				<verse number="18">ಈಗ ನೀನು ಬೀಳುವ ದಿವಸದಲ್ಲಿ ಸಮುದ್ರ ತೀರಗಳು ನಡುಗುವುವು. ಹೌದು, ನೀನು ಅಳಿದು ಹೋದುದ್ದಕ್ಕೆ ಸಮುದ್ರ ತೀರಗಳು ಗಾಬರಿಯಾಗುವುವು.’</verse>
				<verse number="19">“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿನ್ನನ್ನು ನಿವಾಸಿಗಳಿಲ್ಲದ ಪಟ್ಟಣದ ಹಾಗೆ ಹಾಳಾದ ಪಟ್ಟಣವಾಗಿ ಮಾಡುವಾಗ ಹೆಚ್ಚು ನೀರು ಮುಚ್ಚುವ ಹಾಗೆ ಅಗಾಧ ಜಲರಾಶಿಯನ್ನು ನಿನ್ನ ಮೇಲೆ ಬರಮಾಡುವೆನು.</verse>
				<verse number="20">ನಿನ್ನನ್ನು ಅಧೋಲೋಕಕ್ಕೆ ತಳ್ಳಿ ಪಾತಾಳಕ್ಕೆ ಇಳಿದ ನಿಮ್ಮ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು. ನಾನು ನಿನ್ನ ಮಹಿಮೆಯನ್ನು ಜೀವವುಳ್ಳವರ ಲೋಕದಲ್ಲಿ ನೆಲೆಗೊಳಿಸದೆ ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕಿಳಿದವರೊಂದಿಗೆ ವಾಸಿಸುವಂತೆ ಸೇರಿಸುವೆನು.</verse>
				<verse number="21">ನಾನೂ ನಿನ್ನನ್ನು ಭಯಂಕರವಾದ ಅಂತ್ಯಕ್ಕೆ ತರುವೆನು. ಇನ್ನು ಮೇಲೆ ನೀನು ಇರುವುದಿಲ್ಲ; ಆಮೇಲೆ ನಿನ್ನನ್ನು ಎಷ್ಟು ಹುಡುಕಿದರೂ ನೀನು ಸಿಗುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”</verse>
			</chapter>
			<chapter number="27">
				<verse number="1">ಯೆಹೋವ ದೇವರ ವಾಕ್ಯವು ನನಗೆ ಬಂದಿತು,</verse>
				<verse number="2">“ಮನುಷ್ಯಪುತ್ರನೇ, ಈಗ ಟೈರಿನ ಬಗ್ಗೆ ನೀನು ಗೋಳಾಟವನ್ನೆತ್ತು;</verse>
				<verse number="3">ಟೈರಿಗೆ ಹೇಳು, ಸಮುದ್ರದ ಪ್ರವೇಶದಲ್ಲಿ ವಾಸಿಸುವವಳೇ, ಬಹು ದ್ವೀಪಗಳ ಜನರ ನಡುವೆ ವ್ಯಾಪಾರವನ್ನು ನಡೆಸುವವಳೇ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, “ ‘ಟೈರ್ ನಗರಿಯೇ, “ನಾನು ಪೂರ್ಣ ಸೌಂದರ್ಯವತಿ,” ಎಂದು ನೀನು ಅಂದುಕೊಂಡಿದ್ದೀಯಲ್ಲಾ!</verse>
				<verse number="4">ನಿನ್ನ ಮೇರೆಗಳು ಸಮುದ್ರದ ಮಧ್ಯದಲ್ಲಿವೆ. ನಿನ್ನನ್ನು ಕಟ್ಟಿದವರು ನಿನ್ನನ್ನು ಸರ್ವಾಂಗ ಸುಂದರಿಯನ್ನಾಗಿಸಿದ್ದಾರೆ.</verse>
				<verse number="5">ಸೆನೀರಿನ ತುರಾಯಿ ಮರಗಳಿಂದ ನಿನ್ನ ಹಡಗಿನ ಹಲಗೆಗಳನ್ನೆಲ್ಲಾ ಕಟ್ಟಿದ್ದಾರೆ. ನಿನಗೆ ಸ್ತಂಭಗಳನ್ನು ಮಾಡುವುದಕ್ಕೆ ಲೆಬನೋನಿನಿಂದ ದೇವದಾರುಗಳನ್ನು ತಂದಿದ್ದಾರೆ.</verse>
				<verse number="6">ನಿನ್ನ ಹುಟ್ಟುಗೋಲನ್ನು ಬಾಷಾನಿನ ಅಲ್ಲೋನ್ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಮ್ ದ್ವೀಪಗಳಿಂದ ತಂದ ಹಲಗೆಗಳಿಂದ ನಿನ್ನ ಹಡಗಿನ ಮೇಲ್ಮಾಳಿಗೆಯನ್ನು ಕಟ್ಟಿ, ಅದನ್ನು ದಂತದಿಂದ ಶೃಂಗರಿಸಿದ್ದಾರೆ.</verse>
				<verse number="7">ಈಜಿಪ್ಟಿನ ಕಸೂತಿಯ ನಾರುಮಡಿಯಿಂದ ನಿನ್ನ ಪಟವನ್ನು ಮಾಡಿದರು ಮತ್ತು ಅದು ನಿನ್ನ ಧ್ವಜವಾಗಿತ್ತು. ನಿಮ್ಮ ಮೇಲ್ಕಟ್ಟುಗಳು ಎಲೀಷ ಕರಾವಳಿಯಿಂದ ನೀಲಿ ಮತ್ತು ನೇರಳೆ ಬಣ್ಣದ್ದಾಗಿದ್ದವು.</verse>
				<verse number="8">ಸೀದೋನಿನ ಮತ್ತು ಅರ್ವಾದಿನ ನಿವಾಸಿಗಳು ನಿನಗೆ ಹುಟ್ಟು ಹಾಕುವವರಾಗಿದ್ದಾರೆ. ಟೈರ್ ನಗರಿಯೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು.</verse>
				<verse number="9">ಗೆಬಾಲಿನ ಹಿರಿಯರೂ ಅದರ ಜ್ಞಾನಿಗಳೂ ನಿನ್ನ ಬಿರುಕುಗಳನ್ನು ಮುಚ್ಚುವವರಾಗಿ ನಿನ್ನಲ್ಲಿದ್ದಾರೆ. ಸಮುದ್ರದ ಸಕಲ ನಾವೆಗಳೂ ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು ನಿನಗೆ ಸರಕುಗಳನ್ನು ತಂದೊಪ್ಪಿಸುತ್ತಿದ್ದವು.</verse>
				<verse number="10">“ ‘ಪಾರಸಿಯರೂ ಲೂದ್ಯರೂ ಹಾಗೂ ಪೂಟ್ಯರೂ ನಿನ್ನ ಸೈನ್ಯಾಧಿಕಾರಿಗಳಾಗಿ ನಿನ್ನ ಸೈನ್ಯದಲ್ಲಿದ್ದರು. ಗುರಾಣಿಯನ್ನೂ ಶಿರಸ್ತ್ರಾಣವನ್ನೂ ನಿನ್ನ ಗೋಡೆಯಲ್ಲಿ ತೂಗಿಸಿದರು. ಇವರು ನಿನಗೆ ಮಹತ್ತನ್ನು ಕೊಟ್ಟರು.</verse>
				<verse number="11">ಅರ್ವಾದಿನವರು ಮತ್ತು ಹೆಲೆಕರು ನಿನ್ನ ದಂಡಿನ ಸಂಗಡ ನಿನ್ನ ಗೋಡೆಗಳ ಸುತ್ತಲೂ ಇದ್ದರು. ಗಮ್ಮಾದ್ಯರು ನಿನ್ನ ಗೋಪುರಗಳಲ್ಲಿ ಕಾವಲಾಗಿದ್ದರು. ತಮ್ಮ ಖೇಡ್ಯಗಳನ್ನು ಸುತ್ತಮುತ್ತಲೂ ನಿನ್ನ ಗೋಡೆಗಳ ಮೇಲೆ ನೇತುಹಾಕಿ ಇವರು ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು.</verse>
				<verse number="12">“ ‘ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. ಆದ್ದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಹಾಗೂ ಸೀಸಗಳನ್ನು ನಿನಗೆ ಒದಗಿಸುತ್ತಿದ್ದರು.</verse>
				<verse number="13">“ ‘ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ನರಪ್ರಾಣಿಗಳನ್ನೂ ಕಂಚಿನ ಪಾತ್ರೆಗಳನ್ನೂ ನಿನ್ನ ಬಜಾರಿನಲ್ಲಿ ಮಾರಾಟಕ್ಕಿಟ್ಟರು.</verse>
				<verse number="14">“ ‘ತೋಗರ್ಮದ ಮನೆತನದವರು ಕುದುರೆಗಳಿಂದಲೂ ಕುದುರೆ ಸವಾರಿಗಳಿಂದಲೂ ಹೇಸರಗತ್ತೆಗಳಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.</verse>
				<verse number="15">“ ‘ದೆದಾನಿನವರು ನಿನ್ನ ವರ್ತಕರಾಗಿದ್ದರು; ಅನೇಕ ದ್ವೀಪಗಳು ನಿನ್ನ ಕೈಕೆಳಗೆ ವ್ಯಾಪಾರವನ್ನು ನಡೆಸಿದವು; ಅವರು ದಂತದ ಕೊಂಬುಗಳನ್ನೂ ಕರೀ ಮರಗಳನ್ನೂ ನಿನಗೆ ಕಾಣಿಕೆಯಾಗಿ ತರುತ್ತಿದ್ದರು.</verse>
				<verse number="16">“ ‘ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮ್ಯರು ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಳು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.</verse>
				<verse number="17">“ ‘ಯೆಹೂದವೂ ಇಸ್ರಾಯೇಲ್ ದೇಶವೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋಧಿಯಿಂದಲೂ ಮಿಠಾಯಿ, ಜೇನು, ಎಣ್ಣೆ ಮತ್ತು ಸುಗಂಧ ತೈಲದಿಂದಲೂ ನಿನ್ನ ಸಂತೆಯಲ್ಲಿ ವ್ಯಾಪಾರ ನಡೆಸಿದರು.</verse>
				<verse number="18">“ ‘ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನು ಹಾಗೂ ಚಾಹರಿನ ಉಣ್ಣೆಯನ್ನು ನಿನ್ನಲ್ಲಿ ತುಂಬಿಸುತ್ತಿದ್ದರು.</verse>
				<verse number="19">ವೆದಾನ್ ಮತ್ತು ಯಾವಾನ್ ಊರುಗಳು ಹೋಗುವಾಗ ಬರುವಾಗ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು. ಮೆರಗುವ ಕಬ್ಬಿಣ, ದಾಲ್ಚಿನ್ನಿ, ಬಜೆ ಇವುಗಳು ನಿನ್ನ ಬಜಾರಿನಲ್ಲಿ ಇದ್ದವು.</verse>
				<verse number="20">“ ‘ದೆದಾನ್ ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು.</verse>
				<verse number="21">“ ‘ಅರೇಬಿಯ ಮತ್ತು ಕೇದಾರಿನ ಎಲ್ಲಾ ಪ್ರಧಾನಿಗಳು ನಿನ್ನ ಕೈಕೆಲಸದ ಗ್ರಾಹಕರಾಗಿದ್ದರು. ಕುರಿಮರಿಗಳಿಂದಲೂ ಹೋತಗಳಿಂದಲೂ ನಿನ್ನೊಡನೆ ವ್ಯಾಪಾರಮಾಡಿದರು.</verse>
				<verse number="22">“ ‘ಶೆಬದವರು, ರಾಮದವರು ನಿನ್ನ ಕಡೆಯ ವರ್ತಕರಾಗಿ ಎಲ್ಲಾ ಶ್ರೇಷ್ಠವಾದ ಸುಗಂಧ ದ್ರವ್ಯದಿಂದಲೂ ಎಲ್ಲಾ ಬೆಲೆಯುಳ್ಳ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.</verse>
				<verse number="23">“ ‘ಹಾರಾನ್, ಕನ್ನೆ, ಏದೆನ್, ಶೆಬ, ಅಸ್ಸೀರಿಯ ಮತ್ತು ಕಿಲ್ಮದ್ ನಿನ್ನ ವ್ಯಾಪಾರಿಗಳಾಗಿದ್ದರು.</verse>
				<verse number="24">ಇವರು ಎಲ್ಲಾ ತರಹದ ಸಾಮಾನುಗಳಲ್ಲೂ ನಿನ್ನ ವ್ಯಾಪಾರಿಗಳಾಗಿದ್ದರು. ಎಂದರೆ ಸುಂದರವಾದ ಬಟ್ಟೆಗಳು, ನೀಲಿಬಟ್ಟೆಗಳು, ಕಸೂತಿಯ ಕೆಲಸ ಮತ್ತು ಹಗ್ಗಗಳಿಂದ ಬಲವಾಗಿ ಬಿಗಿದ ಬಣ್ಣಬಣ್ಣದ ವಸ್ತ್ರಗಳ ಮೂಟೆಗಳನ್ನೂ ನಿನಗಾಗಿ ಕಳುಹಿಸುತ್ತಿದ್ದರು.</verse>
				<verse number="25">“ ‘ತಾರ್ಷೀಷಿನ ಹಡಗುಗಳು ನಿನ್ನ ಮಾರುಕಟ್ಟೆಗೆ ಸರಕುಗಳನ್ನು ತರುತ್ತಿದ್ದವು. ಹೀಗೆ ನೀನು ತುಂಬಿದ್ದೀ ಮತ್ತು ಸಮುದ್ರಗಳ ಮಧ್ಯದಲ್ಲಿ ಬಹಳ ಘನವುಳ್ಳವಳಾದೆ.</verse>
				<verse number="26">ಹುಟ್ಟು ಹಾಕುವವರು ನಿನ್ನನ್ನು ಸಿಕ್ಕಿಸಿದ್ದಾರೆ. ಪೂರ್ವದಿಕ್ಕಿನ ಗಾಳಿಯು ಸಮುದ್ರದ ಮಧ್ಯದಲ್ಲಿ ನಿನ್ನನ್ನು ಮುರಿದಿದೆ.</verse>
				<verse number="27">ನಿನ್ನ ಆಸ್ತಿಪಾಸ್ತಿಗಳೂ ಸರಕುಗಳೂ ನಿನ್ನ ನಾವಿಕರೂ ನಿನ್ನ ಅಂಬಿಗರೂ ನಿನ್ನ ಒಡಕುಗಳನ್ನು ಮುಚ್ಚುವವರೂ ನಿನ್ನ ವ್ಯಾಪಾರಿಗಳೂ ನಿನ್ನಲ್ಲಿನ ಸಮಸ್ತ ಸೈನಿಕರೂ ಅಂತೂ ನಿನ್ನೊಳಗೆ ಸೇರಿಕೊಂಡಿರುವ ನಿನ್ನ ಸಿಬ್ಬಂದಿಯೆಲ್ಲವೂ ನಿನ್ನ ನಾಶದ ದಿನದಲ್ಲಿ ಸಮುದ್ರದೊಳಗೆ ನಿನ್ನೊಂದಿಗೆ ಮುಳುಗಿ ಹೋಗುವರು.</verse>
				<verse number="28">ನಿನ್ನ ನಾವಿಕರ ಕೂಗಾಟಕ್ಕೆ, ಸಮುದ್ರತೀರದ ಪ್ರದೇಶಗಳು ನಡುಗುವುವು.</verse>
				<verse number="29">ಹುಟ್ಟುಹಾಕುವ ಅಂಬಿಗರೆಲ್ಲರೂ ಸಮುದ್ರದ ಸಕಲ ನಾವಿಕರೂ ತಮ್ಮ ತಮ್ಮ ಹಡಗುಗಳಿಂದಿಳಿದು ನೆಲದ ಮೇಲೆ ನಿಂತುಕೊಂಡು,</verse>
				<verse number="30">ನಿನ್ನ ನಿಮಿತ್ತ ಧ್ವನಿಗೈದು ದುಃಖದಿಂದ, ತಲೆಗೆ ಧೂಳೆರಚಿಕೊಂಡು, ಬೂದಿಯಲ್ಲಿ ಹೊರಳಾಡಿ,</verse>
				<verse number="31">ನಿನಗಾಗಿ ತಲೆ ಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.</verse>
				<verse number="32">ಅವರು ಗೋಳಾಡುತ್ತಾ ನಿನ್ನ ವಿಷಯವಾಗಿ ಶೋಕಗೀತೆಯನ್ನೆತ್ತಿ ಹೀಗೆ ಪ್ರಲಾಪಿಸುವರು; “ಸಮುದ್ರದ ನಡುವೆ ಹಾಳಾಗಿರುವ ಟೈರ್‌ನಂಥ ಪಟ್ಟಣ ಯಾವುದು?”</verse>
				<verse number="33">ನಿನ್ನ ಸರಕು ಸಮುದ್ರದಿಂದ ಹೊರಟಾಗ ಅನೇಕ ಜನರಿಗೆ ತೃಪ್ತಿಪಡಿಸಿದೆ. ನಿನ್ನ ಅಪಾರವಾದ ಐಶ್ವರ್ಯದಿಂದಲೂ ವ್ಯಾಪಾರದ ದಿನಸುಗಳಿಂದಲೂ ಭೂರಾಜರನ್ನು ಸಮೃದ್ಧಿಪಡಿಸಿದೆ.</verse>
				<verse number="34">ಈಗಲಾದರೋ ನೀನು ಸಮುದ್ರದಿಂದ ಹಾಳಾದೆ, ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಆಗಾಧಜಲದಲ್ಲಿ ಮುಳುಗಿ ಹೋದರು.</verse>
				<verse number="35">ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಭಯಭೀತರಾಗಿದ್ದಾರೆ. ಅವರ ಅರಸರು ಬಹಳವಾಗಿ ಭಯಪಟ್ಟಿದ್ದಾರೆ. ರಾಜರು ನಡುಗಿ ಭೀತಿಗೊಂಡರು.</verse>
				<verse number="36">ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸೀಳಿಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.’ ”</verse>
			</chapter>
			<chapter number="28">
				<verse number="1">ಯೆಹೋವ ದೇವರ ವಾಕ್ಯವು ನನಗೆ ಬಂದಿತು:</verse>
				<verse number="2">“ಮನುಷ್ಯಪುತ್ರನೇ, ಟೈರಿನ ಆಡಳಿತ ಅಧಿಕಾರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ಗರ್ವದಿಂದ, “ನಾನು ಒಬ್ಬ ದೇವರು ದೇವರ ಸ್ಥಾನದಲ್ಲಿ ಸಮುದ್ರಗಳ ಮಧ್ಯದಲ್ಲಿ ಕುಳಿತುಕೊಂಡಿರುವೆನು,” ಎಂದು ಹೇಳಿಕೊಂಡಿದ್ದೀ. ಆದರೆ ನೀನು ದೇವರಲ್ಲ, ಮನುಷ್ಯನೇ, ಆದರೂ ನಿನ್ನನ್ನು ನೀನೇ ದೇವರಿಗೆ ಸಮನೆಂದು ಭಾವಿಸಿದೆ.</verse>
				<verse number="3">ನೀನು ದಾನಿಯೇಲನಿಗಿಂತ ಜ್ಞಾನಿಯಾಗಿರುವೆಯಾ? ನಿಮ್ಮಿಂದ ಮರೆಮಾಡಲು ಯಾವುದೇ ರಹಸ್ಯವಿಲ್ಲ.</verse>
				<verse number="4">ನಿನ್ನ ಜ್ಞಾನದಿಂದಲೂ ನಿನ್ನ ವಿವೇಕದಿಂದಲೂ ನಿನಗೆ ಐಶ್ವರ್ಯವನ್ನು ಗಳಿಸಿಕೊಂಡಿರುವೆ. ಚಿನ್ನವನ್ನೂ ಬೆಳ್ಳಿಯನ್ನೂ ನಿನ್ನ ಭಂಡಾರಗಳಲ್ಲಿ ಇಟ್ಟುಕೊಂಡಿರುವೆ.</verse>
				<verse number="5">ವ್ಯಾಪಾರದಲ್ಲಿ ನಿನ್ನ ಅಧಿಕ ಚಾತುರ್ಯದಿಂದಲೂ ನಿನ್ನ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ನಿನ್ನ ಆಸ್ತಿಯ ನಿಮಿತ್ತ ನಿನ್ನ ಹೃದಯ ಗರ್ವಪಟ್ಟಿದೆ.</verse>
				<verse number="6">“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ದೇವರಂತೆ ಬುದ್ಧಿವಂತನು ಎಂದು ಭಾವಿಸಿಕೊಂಡಿರುವೆ;</verse>
				<verse number="7">ಆದ್ದರಿಂದ ಭಯಂಕರ ಜನಾಂಗದವರಾದ ವಿದೇಶಿಯರನ್ನು ನಾನು ನಿನ್ನ ಮೇಲೆ ಬೀಳಮಾಡುವೆನು. ಅವರು ನಿನ್ನ ಸೌಂದರ್ಯ ಮತ್ತು ಜ್ಞಾನದ ವಿರುದ್ಧವಾಗಿ ಖಡ್ಗವನ್ನು ಹಿರಿಯುವರು; ನಿನ್ನ ಹೊಳೆಯುವ ವೈಭವವನ್ನು ಕೆಡಿಸುವರು.</verse>
				<verse number="8">ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು. ಸಮುದ್ರಗಳ ಮಧ್ಯದಲ್ಲಿ ಭಯಂಕರವಾದ ಮರಣದ ಹಾಗೆ ನೀನು ಸಾಯುವೆ.</verse>
				<verse number="9">ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು, “ನಾನು ದೇವರು,” ಎಂದು ಹೇಳುವೆಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರಪ್ರಾಣಿಯೇ;</verse>
				<verse number="10">ನೀನು ವಿದೇಶಿಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವೆ. ಏಕೆಂದರೆ ನಾನೇ ಇದನ್ನು ಹೇಳಿದ್ದೇನೆಂದು ಸಾರ್ವಭೌಮ ಯೆಹೋವ ದೇವರು ಹೇಳಿದ್ದಾರೆ.’ ”</verse>
				<verse number="11">ಯೆಹೋವ ದೇವರ ವಾಕ್ಯವು ಪುನಃ ನನಗೆ ಬಂದಿತು,</verse>
				<verse number="12">“ಮನುಷ್ಯಪುತ್ರನೇ, ಟೈರಿನ ಅರಸನ ವಿಷಯದಲ್ಲಿ ಶೋಕಗೀತೆಯನ್ನೆತ್ತಿ ಅವನಿಗೆ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನೀನು ಸರ್ವಸುಲಕ್ಷಣ ಶಿರೋಮಣಿ. ಸಂಪೂರ್ಣಜ್ಞಾನಿ, ಪರಿಪೂರ್ಣ ಸುಂದರವಾದ ನೀನು ಲೆಕ್ಕವನ್ನು ಮುದ್ರಿಸುತ್ತೀ.</verse>
				<verse number="13">ದೇವರ ತೋಟವಾದ ಏದೆನಿನಲ್ಲಿ ನೀನಿದ್ದೆ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು, ಸ್ಪಟಿಕ ಚಿನ್ನ ಈ ಅಮೂಲ್ಯವಾದವುಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.</verse>
				<verse number="14">ನೀನು ರಕ್ಷಕ ಕೆರೂಬಿಯಾಗಿ ಅಭಿಷೇಕಹೊಂದಿದೆ. ನಾನೇ ನಿನ್ನನ್ನು ನೇಮಿಸಿದ್ದೇನೆ. ನೀನು ದೇವರ ಪರಿಶುದ್ಧ ಪರ್ವತದ ಮೇಲೆ ಇದ್ದೆ; ನೀನು ಉರಿಯುತ್ತಿರುವ ಕಲ್ಲುಗಳ ನಡುವೆ ನಡೆದೆ.</verse>
				<verse number="15">ನಿನ್ನ ಸೃಷ್ಟಿಯ ದಿನದಿಂದ ನಿನ್ನಲ್ಲಿ ಅಪರಾಧವು ಸಿಕ್ಕುವ ತನಕ ನಿನ್ನ ನಡತೆಯು ನಿರ್ದೋಷವಾಗಿ ಕಾಣುತ್ತಿತ್ತು.</verse>
				<verse number="16">ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಹಿಂಸಾಚಾರವು ತುಂಬಿ ನೀನು ಪಾಪಿಯಾದೆ; ಆದ್ದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ತಳ್ಳಿಬಿಟ್ಟೆನು. ಓ ರಕ್ಷಕ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.</verse>
				<verse number="17">ನೀನು ನಿನ್ನ ಸೌಂದರ್ಯದ ನಿಮಿತ್ತ ಉಬ್ಬಿದ ಮನಸ್ಸುಳ್ಳವನಾದೆ. ನಿನ್ನ ಮೆರೆತದ ನಿಮಿತ್ತ ನಿನ್ನ ಬುದ್ಧಿಯನ್ನು ಕಳೆದುಕೊಂಡೆ. ಇದರಿಂದ ನಾನು ನಿನ್ನನ್ನು ನೆಲಕ್ಕೆ ದೊಬ್ಬಿ ನೀನು ಅರಸರಿಗೆ ನೋಟವಾಗಲೆಂದೆ ಅವರ ಕಣ್ಣಮುಂದೆ ಎಸೆದೆನು.</verse>
				<verse number="18">ನಿನ್ನ ಅಪಾರವಾದ ಪಾಪಗಳಿಂದಲೂ ಅನ್ಯಾಯವಾದ ವ್ಯಾಪಾರಗಳಿಂದಲೂ ನಿನ್ನಲ್ಲಿನ ಪವಿತ್ರಾಲಯಗಳನ್ನು ಹೊಲಸುಮಾಡಿದೆ. ಆದಕಾರಣ ನಾನು ನಿನ್ನೊಳಗಿಂದ ಬೆಂಕಿಯನ್ನು ಬರಮಾಡಿದೆನು, ಅದು ನಿನ್ನನ್ನು ನುಂಗಿಬಿಟ್ಟಿತು. ನೋಡುವವರೆಲ್ಲರ ಮುಂದೆ ನಿನ್ನನ್ನು ಬೂದಿಮಾಡುವೆನು.</verse>
				<verse number="19">ನಿನ್ನನ್ನು ಅರಿತ ಜನರೆಲ್ಲರೂ ನಿನ್ನ ವಿಷಯದಲ್ಲಿ ಭಯಗೊಳ್ಳುವರು. ನೀನು ಸಂಪೂರ್ಣ ಭೀತಿಗೊಳಗಾಗಿ ಇನ್ನೆಂದಿಗೂ ಇಲ್ಲದಂತಾಗುವೆ.’ ”</verse>
				<verse number="20">ಯೆಹೋವ ದೇವರ ವಾಕ್ಯವು ನನಗೆ ಬಂದಿತು,</verse>
				<verse number="21">“ಮನುಷ್ಯಪುತ್ರನೇ, ನೀನು ಸೀದೋನಿಗೆ ಅಭಿಮುಖವಾಗಿ ಅದಕ್ಕೆ ವಿರುದ್ಧವಾಗಿ ಪ್ರವಾದಿಸು.</verse>
				<verse number="22">ನೀನು ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಸೀದೋನೇ ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಮಧ್ಯದಲ್ಲಿ ಘನವನ್ನು ಹೊಂದುವೆನು. ಆಗ ನಾನು ಅದರಲ್ಲಿ ನ್ಯಾಯಗಳನ್ನು ತೀರಿಸಿ, ಪರಿಶುದ್ಧವಾಗುವಾಗ ನಾನೇ ಯೆಹೋವ ದೇವರೆಂದು ತಿಳಿಯುವರು.</verse>
				<verse number="23">ನಾನು ಅದರಲ್ಲಿ ವ್ಯಾಧಿಯನ್ನೂ ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟುಮಾಡುವೆನು, ಖಡ್ಗವು ಸುತ್ತುಮುತ್ತಲು ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು, ಆಗ ನಾನೇ ಯೆಹೋವ ದೇವರು ಎಂದು ಅವರಿಗೆ ತಿಳಿದುಬರುವುದು.</verse>
				<verse number="24">“ ‘ಇಸ್ರಾಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು, ಹೀನೈಸುವ ನೆರೆಹೊರೆಯವರೆಂಬ ಮುಳ್ಳಿನ ಬಾಧೆ ಇನ್ನಾಗದು. ನಾನೇ ಸಾರ್ವಭೌಮ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.</verse>
				<verse number="25">“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಜನಾಂಗಗಳಲ್ಲಿ ಚದರಿಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ದಾಸ ಯಾಕೋಬನಿಗೆ ನಾನು ಅನುಗ್ರಹಿಸಿದ ಸ್ವಂತ ನಾಡಿನಲ್ಲಿ ವಾಸಿಸುವರು.</verse>
				<verse number="26">ಅವರು ನಿರ್ಭಯವಾಗಿ ಅಲ್ಲಿ ವಾಸಿಸುವರು. ಮನೆಗಳನ್ನು ಕಟ್ಟುವರು; ದ್ರಾಕ್ಷಿತೋಟಗಳನ್ನು ನೆಡುವರು. ಹೌದು, ಅವರ ಸುತ್ತಲೂ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯವಾಗಿ ವಾಸಿಸುವರು, ಆಗ ಯೆಹೋವನಾದ ನಾನೇ ಅವರ ದೇವರೆಂದು ತಿಳಿಯುವರು.’ ”</verse>
			</chapter>
			<chapter number="29">
				<verse number="1">ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹನ್ನೆರಡನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು,</verse>
				<verse number="2">“ನರಪುತ್ರನೇ, ನೀನು ಈಜಿಪ್ಟಿನ ಅರಸನಾದ ಫರೋಹನ ಕಡೆಗೆ ಮುಖಮಾಡಿ ಅವನಿಗೂ ಸಮಸ್ತ ಈಜಿಪ್ಟಿಗೂ ವಿರೋಧವಾಗಿ ಪ್ರವಾದಿಸು.</verse>
				<verse number="3">ನೀನು ಮಾತನಾಡಿ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಈಜಿಪ್ಟಿನ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು ಈ ನೈಲ್ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.</verse>
				<verse number="4">ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, ನಿನ್ನ ನದಿಗಳ ಮೀನುಗಳನ್ನು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ನಿನ್ನನ್ನು ನಿನ್ನ ನದಿಯೊಳಗಿಂದ ಮೇಲೆ ಎಳೆದು ನಿನ್ನ ಮೀನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು.</verse>
				<verse number="5">ನಿನ್ನನ್ನೂ ನಿನ್ನ ನದಿಗಳ ಮೀನುಗಳನ್ನೂ ಅರಣ್ಯದಲ್ಲಿ ಹಾಕುವೆನು. ನೀನು ಬಯಲುಗಳ ಮೇಲೆ ಬಿದ್ದಿರುವೆ; ನಿನ್ನನ್ನು ಯಾರೂ ಹೊರುವುದೂ ಇಲ್ಲ, ಸೇರಿಸುವುದೂ ಇಲ್ಲ. ನಿನ್ನನ್ನೂ ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಕಾಡಿನ ಪಾಲುಮಾಡುವೆನು. ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರವನ್ನಾಗಿ ಕೊಟ್ಟಿದ್ದೇನೆ.</verse>
				<verse number="6">ಆಗ ಎಲ್ಲಾ ಈಜಿಪ್ಟಿನ ನಿವಾಸಿಗಳು ನಾನೇ ಯೆಹೋವನೆಂದು ತಿಳಿಯುವರು. “ ‘ಅವರು ಇಸ್ರಾಯೇಲರ ಮನೆತನದವರಿಗೆ ದಂಟಿನ ಊರುಗೋಲಾಗಿದ್ದರು.</verse>
				<verse number="7">ಇಸ್ರಾಯೇಲರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದೆ; ಅವರು ನಿನ್ನನ್ನು ಆದರಿಸಿಕೊಂಡಾಗ ನೀನು ಮುರಿದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ.</verse>
				<verse number="8">“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾನೆ: ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ.</verse>
				<verse number="9">ನೀನು, “ಆ ನೈಲ್ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು,” ಹೇಳಿಕೊಂಡದ್ದರಿಂದ, “ ‘ಈಜಿಪ್ಟ್ ದೇಶವು ಹಾಳು ಮರುಭೂಮಿಯಾಗುವುದು. ಆಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.</verse>
				<verse number="10">ಆದ್ದರಿಂದ ಇಗೋ, ನಾನು ನಿನಗೂ ನಿನ್ನ ನದಿಗಳಿಗೂ ವಿರುದ್ಧವಾಗಿದ್ದೇನೆ. ಈಜಿಪ್ಟ್ ದೇಶವನ್ನು ಮಿಗ್ದೋಲಿನಿಂದ ಸೆವೇನೆಯ ಗೋಪುರ ಮೊದಲುಗೊಂಡು ಕೂಷಿನ ಪ್ರಾಂತದವರೆಗೂ ಸಂಪೂರ್ಣವಾಗಿ ಕಾಡಾಗಿಯೂ ಹಾಳಾಗಿಯೂ ಮಾಡುತ್ತೇನೆ.</verse>
				<verse number="11">ಯಾವ ಮನುಷ್ಯನ ಪಾದವಾದರೂ ಅದರಲ್ಲಿ ಹಾದು ಹೋಗುವುದಿಲ್ಲ. ಮೃಗಗಳ ಪಾದವೂ ಅದರಲ್ಲಿ ಹಾದು ಹೋಗುವುದಿಲ್ಲ ಅಥವಾ ನಲವತ್ತು ವರ್ಷಗಳ ಕಾಲ ಅದರಲ್ಲಿ ವಾಸಮಾಡುವವರೇ ಇರುವುದಿಲ್ಲ.</verse>
				<verse number="12">ನಾನು ಈಜಿಪ್ಟ್ ದೇಶವನ್ನು ಹಾಳುಬಿದ್ದಿರುವ ದೇಶಗಳಲ್ಲಿ ಸೇರಿಸುವೆನು. ಅದರ ಪಟ್ಟಣಗಳು ಕಾಡಾಗಿರುವ ಪಟ್ಟಣಗಳ ನಡುವೆ ನಲವತ್ತು ವರ್ಷಗಳು ಹಾಳಾಗಿರುವುವು. ನಾನು ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದುರಿಸಿ ದೇಶಗಳಲ್ಲಿ ಹರಡಿಸಿಬಿಡುವೆನು.</verse>
				<verse number="13">“ ‘ಆದರೂ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಲವತ್ತು ವರ್ಷಗಳ ಕೊನೆಯಲ್ಲಿ ನಾನು ಈಜಿಪ್ಟಿನವರನ್ನು ಚದುರಿರುವ ರಾಷ್ಟ್ರಗಳಿಂದ ಒಟ್ಟುಗೂಡಿಸುವೆನು.</verse>
				<verse number="14">ನಾನು ಈಜಿಪ್ಟಿನವರನ್ನು ಸೆರೆಯಿಂದ ತಿರುಗಿ ಬಿಡಿಸಿ ಅವರನ್ನು ಪತ್ರೋಸ್ ದೇಶಕ್ಕೆ ಅಂದರೆ ಅವರ ಜನ್ಮದೇಶಕ್ಕೆ ಮತ್ತೆ ಬರಮಾಡುವೆನು. ಅಲ್ಲಿ ಅವರು ಕನಿಷ್ಠ ರಾಜ್ಯದವರಾಗಿರುವರು.</verse>
				<verse number="15">ಆ ರಾಜ್ಯವು ಸಮಸ್ತ ರಾಜ್ಯಗಳಲ್ಲಿ ಕನಿಷ್ಠ ರಾಜ್ಯವೆನಿಸಿಕೊಳ್ಳುವುದು. ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆ ಎತ್ತದು. ಅದು ಜನಾಂಗಗಳ ಮೇಲೆ ದೊರೆತನ ಮಾಡಲಾಗದಂತೆ ಅದನ್ನು ಕ್ಷೀಣಗತಿಗೆ ತರುವೆನು.</verse>
				<verse number="16">ಇನ್ನು ಅದು ಇಸ್ರಾಯೇಲ್ ವಂಶದವರ ಭರವಸೆಯಾಗದೆ, ಇವರು ಅವರ ಕಡೆಗೆ ನೋಡಿದಾಗ ಪಾಪವನ್ನು ಜ್ಞಾಪಕಕ್ಕೆ ತರುವರು. ಆಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”</verse>
				<verse number="17">ಇಪ್ಪತ್ತೇಳನೆಯ ವರ್ಷದಲ್ಲಿ, ಮೊದಲನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು,</verse>
				<verse number="18">“ಮನುಷ್ಯಪುತ್ರನೇ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಟೈರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ ಅವನ ಸೈನಿಕರಿಗಾಗಲಿ ಟೈರನಿಂದ ಪ್ರತಿಫಲವೇನೂ ದೊರೆಯಲಿಲ್ಲ.</verse>
				<verse number="19">ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಈಜಿಪ್ಟ್ ದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಅದರ ಕೊಳ್ಳೆಯನ್ನೂ ಅದರ ಸುಲಿಗೆಯನ್ನೂ ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವುದು.</verse>
				<verse number="20">ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಈಜಿಪ್ಟ್ ದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಸೇವೆಮಾಡಿದ್ದಾರೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="21">“ಆ ದಿನದಲ್ಲಿ ನಾನು ಇಸ್ರಾಯೇಲರ ಮನೆತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ಆಗ ಅವರು ನಾನೇ ಯೆಹೋವ ದೇವರೆಂದು ತಿಳಿಯುವರು.”</verse>
			</chapter>
			<chapter number="30">
				<verse number="1">ಯೆಹೋವ ದೇವರ ವಾಕ್ಯವು ನನಗೆ ಬಂದಿತು,</verse>
				<verse number="2">“ಮನುಷ್ಯಪುತ್ರನೇ, ಪ್ರವಾದಿಸು ಮತ್ತು ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ “ಅಯ್ಯೋ ಆ ದಿನ!” ಎಂದು, ಅಳುತ್ತಾ ಹೇಳಿರಿ.</verse>
				<verse number="3">ಏಕೆಂದರೆ ಆ ದಿನವು ಸಮೀಪವಾಯಿತು, ಯೆಹೋವ ದೇವರ ದಿನವು, ಆ ಕಾರ್ಮುಗಿಲಿನ ದಿನವು ಸಮೀಪವಾಯಿತು. ಅದೇ ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವದು.</verse>
				<verse number="4">ಖಡ್ಗವು ಈಜಿಪ್ಟಿಗೆ ವಿರುದ್ಧವಾಗಿ ಬರುವುದು. ಕೂಷ್ ಪಟ್ಟಣವು ಸಂಕಟಪಡುವುದು. ಈಜಿಪ್ಟಿನಲ್ಲಿ ಕೊಲ್ಲಲಾದವರು ಬಿದ್ದಾಗ, ಅವಳ ಸಂಪತ್ತು ಸೂರೆಯಾಗುವುದು. ಅವಳ ಅಡಿಪಾಯಗಳು ಕಿತ್ತುಹೋಗುವವು.</verse>
				<verse number="5">ಕೂಷ್ಯರು, ಪೂಟ್ಯರು, ಲೂದ್ಯರು, ಎಲ್ಲಾ ಅರಬ್ಬಿಯರೂ ಕೂಬ್ಯರೂ ಒಡಂಬಡಿಕೆ ಮಾಡಿಕೊಂಡ ಮಿತ್ರ ರಾಜ್ಯದವರೂ ಅವರ ಸಂಗಡ ಖಡ್ಗದಿಂದ ಹತರಾಗುವರು.</verse>
				<verse number="6">“ ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಈಜಿಪ್ಟಿನ ಸಹಾಯಕರು ಬೀಳುವರು. ಅದರ ಶಕ್ತಿಯ ಮದವು ಇಳಿದುಹೋಗುವುದು. ಅಲ್ಲಿಯ ಜನರು ಮಿಗ್ದೋಲಿನಿಂದ ಸೆವೇನೆಯ ಗೋಪುರದವರೆಗೆ ಖಡ್ಗದಿಂದ ಹತರಾಗುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="7">ಆಗ ಅವರು ಹಾಳಾಗಿರುವ ದೇಶಗಳೊಳಗೆ ತಾವೂ ಹಾಳಾಗುವರು. ಹಾಳಾದ ಪಟ್ಟಣಗಳ ಮಧ್ಯದಲ್ಲಿ ಅದರ ಪಟ್ಟಣಗಳು ಹಾಳಾಗಿ ಇರುವುವು.</verse>
				<verse number="8">ನಾನು ಈಜಿಪ್ಟಿನಲ್ಲಿ ಬೆಂಕಿಯಿಟ್ಟ ಮೇಲೆ ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ ಅವರಿಗೆ ನಾನೇ ಯೆಹೋವ ದೇವರೆಂದು ತಿಳಿಯುವುದು.</verse>
				<verse number="9">“ ‘ಆ ದಿನದಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು ಹಡಗುಗಳಲ್ಲಿ ಪ್ರಯಾಣಮಾಡಿ ನಿಶ್ಚಿಂತರಾದ ಕೂಷ್ಯರನ್ನು ಹೆದರಿಸುವರು. ಈಜಿಪ್ಟಿನ ದಿನದಲ್ಲಿ ಆದ ಹಾಗೆ ಅವರ ಮೇಲೆ ದೊಡ್ಡ ದುಃಖ ಉಂಟಾಗುವುದು, ಏಕೆಂದರೆ ಇಗೋ, ಆ ದಿನ ಬರುವುದು ನಿಶ್ಚಯ.</verse>
				<verse number="10">“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನಾನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಿಂದ ಈಜಿಪ್ಟಿನ ಜನಸಮೂಹವನ್ನು ಕೊನೆಗಾಣಿಸುವೆನು.</verse>
				<verse number="11">ಆ ದೇಶವನ್ನು ನಾಶಪಡಿಸುವುದಕ್ಕೆ ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು. ಅವರು ಈಜಿಪ್ಟಿಗೆ ವಿರೋಧವಾಗಿ ಖಡ್ಗ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.</verse>
				<verse number="12">ಇದಲ್ಲದೆ ನಾನು ನದಿಗಳನ್ನು ಒಣಗಿಸಿ ದೇಶವನ್ನು ದುಷ್ಟರ ಕೈಗೆ ಮಾರಿಬಿಡುವೆನು. ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ವಿದೇಶಿಯರ ಕೈಯಿಂದ ನಾಶಮಾಡಿಸುವೆನು. ಯೆಹೋವ ದೇವರಾದ ನಾನೇ ಇದನ್ನು ನುಡಿದಿದ್ದೇನೆ.</verse>
				<verse number="13">“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನಾನು ಮೂರ್ತಿಗಳನ್ನು ನಾಶಮಾಡುವೆನು. ಮತ್ತು ನೋಫಿನ ವಿಗ್ರಹಗಳನ್ನು ಕೊನೆಗೊಳಿಸುವೆನು. ಈಜಿಪ್ಟ್ ದೇಶದ ರಾಜಕುಮಾರ ಇನ್ನು ಮುಂದೆ ಇರುವುದಿಲ್ಲ, ನಾನು ಈಜಿಪ್ಟ್ ದೇಶದಲ್ಲಿ ಭಯವನ್ನು ಉಂಟುಮಾಡುವೆನು.</verse>
				<verse number="14">ನಾನು ಪತ್ರೋಸನ್ನು ನಾಶಮಾಡಿ, ಚೋವನ್ ಪಟ್ಟಣಕ್ಕೆ ಬೆಂಕಿಯಿಡುವೆನು. ತೆಬೆಸ್ ಪಟ್ಟಣವನ್ನು ದಂಡಿಸುವೆನು.</verse>
				<verse number="15">ಈಜಿಪ್ಟಿಗೆ ರಕ್ಷಣೆಯ ಕೋಟೆಯಾದ ಪೆಲೂಸಿಯಮ್ ಪಟ್ಟಣದ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ತೆಬೆಸಿನ ನಿವಾಸಿಗಳನ್ನೆಲ್ಲಾ ಕಡಿದುಬಿಡುವೆನು.</verse>
				<verse number="16">ನಾನು ಈಜಿಪ್ಟಿಗೆ ಕಿಚ್ಚನ್ನು ಹಚ್ಚಿಸಲು ಪೆಲೂಸಿಯಮ್ ಪ್ರಾಣಸಂಕಟ ಪಡುವುದು. ತೆಬೆಸವು ಬಿರುಗಾಳಿಯಿಂದ ತೆಗೆದುಕೊಳ್ಳಲಾಗುವುದು, ನೋಫಿನ ಮೇಲೆ ನಿರಂತರವಾಗಿ ಇಕ್ಕಟ್ಟು ಇರುವುದು.</verse>
				<verse number="17">ಓನಿನ ಮತ್ತು ಪಿಬೇಸೆತಿನ ಯೌವನಸ್ಥರು ಖಡ್ಗದಿಂದ ಸಾಯುವರು. ಈ ಪಟ್ಟಣಗಳ ನಿವಾಸಿಗಳು ತಾವಾಗಿಯೇ ಸೆರೆಯಾಗಿ ಹೋಗುವುವು.</verse>
				<verse number="18">ನಾನು ಈಜಿಪ್ಟಿನ ನೊಗಗಳನ್ನು ಮುರಿಯುವಾಗ ತಹಪನೇಸಿನಲ್ಲಿ ಹಗಲು ಕತ್ತಲಾಗುವುದು. ಅದರ ಶಕ್ತಿಯ ಮದವು ಅಡಗಿಹೋಗುವುದು. ಅದನ್ನು ಮೇಘವು ಮುಚ್ಚುವುದು. ಅದರ ಪುತ್ರಿಯರು ಸೆರೆಗೆ ಹೋಗುವರು.</verse>
				<verse number="19">ಹೀಗೆ ನಾನು ಈಜಿಪ್ಟನ್ನು ದಂಡಿಸುವೆನು. ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”</verse>
				<verse number="20">ಇದಲ್ಲದೆ ಹನ್ನೊಂದನೆಯ ವರ್ಷದ ಮೊದಲನೆಯ ತಿಂಗಳಿನ, ಏಳನೆಯ ದಿನದಲ್ಲಿ, ಯೆಹೋವ ದೇವರ ವಾಕ್ಯವು ನನಗೆ ಬಂದು ಹೇಳಿದ್ದೇನೆಂದರೆ,</verse>
				<verse number="21">“ಮನುಷ್ಯಪುತ್ರನೇ, ನಾನು ಈಜಿಪ್ಟಿನ ಅರಸನಾದ ಫರೋಹನ ತೋಳನ್ನು ಮುರಿದು ಹಾಕಿದ್ದೇನೆ. ಇಗೋ, ಆ ದೇಶವನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ. ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ ಅದನ್ನು ಬಿಗಿಸಲಿಲ್ಲ.</verse>
				<verse number="22">ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಇಗೋ, ನಾನು ಈಜಿಪ್ಟ್ ದೇಶದ ಅರಸನಾದ ಫರೋಹನಿಗೆ ವಿರುದ್ಧವಾಗಿದ್ದೇನೆ. ಬಲವುಳ್ಳದ್ದೂ ಮುರಿದದ್ದೂ ಆಗಿರುವ ಅವನ ತೋಳುಗಳನ್ನು ಮುರಿಯುತ್ತೇನೆ. ಅವನ ಕೈಯಿಂದ ಖಡ್ಗವನ್ನು ಬೀಳಿಸುತ್ತೇನೆ.</verse>
				<verse number="23">ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದರಿಸಿ ದೇಶಗಳ ಮೇಲೆ ಹರಡುವೆನು.</verse>
				<verse number="24">ಬಾಬಿಲೋನಿನ ಅರಸನ ತೋಳುಗಳನ್ನು ನಾನು ಬಲಪಡಿಸುವೆನು, ಅವನ ಕೈಯಲ್ಲಿ ನನ್ನ ಖಡ್ಗವನ್ನಿಡುವೆನು. ಫರೋಹನ ತೋಳುಗಳು ಬಿದ್ದು ಹೋಗುವುವು. ಇವನು ಅವನ ಮುಂದೆ ಗಾಯ ಹೊಂದಿದವನಂತೆ ನರಳಾಡುವನು.</verse>
				<verse number="25">ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸುತ್ತೇನೆ, ಆದರೆ ಫರೋಹನ ಕೈಗಳು ಬಲಹೀನವಾಗುವುವು. ನಾನು ನನ್ನ ಖಡ್ಗವನ್ನು ಬಾಬಿಲೋನಿನ ಅರಸನ ಕೈಗೆ ಕೊಡುವೆನು. ಅವನು ಅದನ್ನು ಈಜಿಪ್ಟಿನ ವಿರೋಧವಾಗಿ ಪ್ರಯೋಗಿಸುವನು. ಆಗ ಅವರು ನಾನೇ ಯೆಹೋವ ದೇವರು ಎಂದು ತಿಳಿದುಕೊಳ್ಳುವರು.</verse>
				<verse number="26">ನಾನು ಈಜಿಪ್ಟಿನವರನ್ನು ಜನಾಂಗಗಳೊಗೆ ಚದುರಿಸಿ ದೇಶಗಳಲ್ಲಿ ಹರಡಿಸುತ್ತೇನೆ; ಆಗ ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.”</verse>
			</chapter>
			<chapter number="31">
				<verse number="1">ಹನ್ನೊಂದನೆಯ ವರ್ಷದ, ಮೂರನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು:</verse>
				<verse number="2">“ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನೊಂದಿಗೂ ಮತ್ತು ಅವನ ಸಮೂಹದೊಂದಿಗೂ ಮಾತನಾಡಿ, “ ‘ನೀನು ನಿನ್ನ ದೊಡ್ಡಸ್ತಿಕೆಯಲ್ಲಿ ಯಾರಿಗೆ ಸಮಾನವಾಗಿರುವೆ?</verse>
				<verse number="3">ಅಸ್ಸೀರಿಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಬಹಳ ಎತ್ತರವಾಗಿದೆ, ಅದರ ತುದಿಯು ದಟ್ಟವಾದ ಕೊಂಬೆಗಳ ನಡುವೆಯಿತ್ತು.</verse>
				<verse number="4">ಅದನ್ನು ಜಲಪ್ರವಾಹಗಳು ಬೆಳೆಸಿದವು, ಆಳವಾದ ಬುಗ್ಗೆಗಳು ಅದನ್ನು ಎತ್ತರಕ್ಕೆ ಬೆಳೆಸಿದವು. ಅವುಗಳ ತೊರೆಗಳು ಅದರ ಬುಡದ ಸುತ್ತಲೂ ಹರಿದು ತಮ್ಮ ಕಾಲುವೆಗಳನ್ನು ಹೊಲದ ಎಲ್ಲಾ ಮರಗಳಿಗೆ ಕಳುಹಿಸಿದವು.</verse>
				<verse number="5">ಆದ್ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರಗಳಿಗಿಂತ ಎತ್ತರವಾಗಿತ್ತು. ಅದು ಹಬ್ಬಿದ್ದುದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು.</verse>
				<verse number="6">ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು. ಅದರ ರೆಂಬೆಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮ ಕೊಟ್ಟವು. ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು.</verse>
				<verse number="7">ಹೀಗೆ ಅದರ ತನ್ನ ದೊಡ್ಡಸ್ತಿಕೆಯಲ್ಲಿ ತನ್ನ ನೀಳವಾದ ಕೊಂಬೆಗಳಿಂದ ಸುಂದರವಾಗಿತ್ತು. ಏಕೆಂದರೆ ಅದರ ಬೇರು ಸಾಕಷ್ಟು ನೀರಿನ ಆಸರೆ ಪಡೆದಿತ್ತು.</verse>
				<verse number="8">ದೇವರ ತೋಟದ ದೇವದಾರುಗಳು ಅದನ್ನು ಮರೆಮಾಡಲಿಲ್ಲ. ತುರಾಯಿ ಮರಗಳು ಅದರ ಕೊಂಬೆಗಳಿಗೆ ಸಮವಾಗಲಿಲ್ಲ. ಆಲದ ಮರಗಳು ಅದರ ರೆಂಬೆಗಳಷ್ಟೂ ಇಲ್ಲ. ಆ ದೇವರ ತೋಟದ ಯಾವುದೇ ಮರವು ಇದರ ಸೌಂದರ್ಯಕ್ಕೆ ಸಮವಾಗಿಲ್ಲ.</verse>
				<verse number="9">ನಾನು ಅದನ್ನು ಅದರ ಕೊಂಬೆಗಳ ಸಮೂಹದಿಂದ ಸುಂದರಗೊಳಿಸಿದೆನು. ಅದರಿಂದ ದೇವರ ತೋಟದಲ್ಲಿನ ಏದೆನಿನ ಮರಗಳೆಲ್ಲಾ ಅದರ ಮೇಲೆ ಹೊಟ್ಟೆಕಿಚ್ಚು ಪಟ್ಟವು.</verse>
				<verse number="10">“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಅವನು ಎತ್ತರವಾಗಿ ಬೆಳೆದು ತನ್ನ ತುದಿ ಮೋಡಗಳನ್ನು ಮುಟ್ಟುವಷ್ಟು ನೀಳವಾಗಿದ್ದುದರ ಬಗ್ಗೆ ಗರ್ವಪಟ್ಟನು.</verse>
				<verse number="11">ಆದ್ದರಿಂದ ನಾನು ಅವನನ್ನು ಜನಾಂಗಗಳಲ್ಲಿ ಶೂರನಾದ ಒಬ್ಬನ ಕೈಗೆ ಕೊಟ್ಟಿದ್ದೇನೆ. ಇವನು ನಿಶ್ಚಯವಾಗಿ ಅದನ್ನು ದಂಡಿಸುತ್ತಾನೆ ಅದರ ದುಷ್ಟತ್ವದ ನಿಮಿತ್ತ ನಾನು ಅದನ್ನು ತಳ್ಳಿಹಾಕಿದ್ದೇನೆ.</verse>
				<verse number="12">ಜನಾಂಗಗಳಲ್ಲಿ ಭಯಂಕರವಾದ ವಿದೇಶಿಯರು ಅದನ್ನು ಕಡಿದುಹಾಕುವರು. ಎಲ್ಲಾ ಬೆಟ್ಟಗಳ ಮೇಲೆಯೂ ತಗ್ಗುಗಳಲ್ಲಿಯೂ ಅದರ ಕೊಂಬೆಗಳು ಬೀಳುವುವು. ದೇಶದ ಹಳ್ಳಗಳಲ್ಲೆಲ್ಲಾ ಅದರ ರೆಂಬೆಗಳು ಮುರಿದು ಹೋಗುವುವು. ಭೂಮಿಯ ಜನಗಳೆಲ್ಲಾ ಅದರ ನೆರಳಿನಿಂದ ದೂರ ಸರಿದು ಅದನ್ನು ಬಿಟ್ಟುಬಿಡುವರು.</verse>
				<verse number="13">ಕೆಳಗೆ ಬಿದ್ದ ಮರದ ಮೇಲೆ ಆಕಾಶದ ಪಕ್ಷಿಗಳೆಲ್ಲಾ ಕೂತುಕೊಳ್ಳುವುವು. ಎಲ್ಲಾ ಕಾಡುಮೃಗಗಳು ಅದರ ರೆಂಬೆಗಳ ಬಳಿಯಲ್ಲಿರುವುವು.</verse>
				<verse number="14">ನೀರಾವರಿಯ ಯಾವ ಮರಗಳು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ ಇರುವುದರಿಂದ ನೀರನ್ನು ಹೀರುತ್ತಲಿರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು, ಅವೆಲ್ಲಾ ಮರಣದ ಪಾಲಾಗುವುವು. ಅವುಗಳಿಗೆ ಅಧೋಲೋಕವೇ ಗತಿಯಾಗುವುದು, ಪಾತಾಳಕ್ಕೆ ಇಳಿದು ಹೋದ ಮನುಷ್ಯ ಜನ್ಮದವರ ಬಳಿಗೆ ಒಂದೇ ಗುಂಪಾಗಿ ಸೇರುವುವು.</verse>
				<verse number="15">“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅದು ಸಮಾಧಿಗೆ ಇಳಿದ ದಿನದಲ್ಲಿ ನಾನು ಆಳವಾದ ಬುಗ್ಗೆಗಳನ್ನು ದುಃಖದಿಂದ ಮುಚ್ಚಿದೆನು; ನಾನು ಅದರ ಪ್ರವಾಹವನ್ನು ತಡೆಹಿಡಿದೆನು. ಮಹಾಜಲವನ್ನು ನಿಲ್ಲಿಸಿದೆನು. ನಾನು ಲೆಬನೋನನ್ನು ಸಹ ಅವನಿಗೋಸ್ಕರ ಗೋಳಿಡುವಂತೆ ಮಾಡಿದೆನು. ಬಯಲಿನ ಮರಗಳೆಲ್ಲಾ ಕುಗ್ಗಿಹೋದವು.</verse>
				<verse number="16">ನಾನು ಅದನ್ನು ಕುಳಿಗೆ ಇಳಿಯುವವರ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು. ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ನೀರು ಕುಡಿಯುವುವುಗಳೆಲ್ಲಾ ಕೆಳಗಿನ ಸೀಮೆಯಲ್ಲಿ ಸಂತೈಸಿಕೊಂಡವು.</verse>
				<verse number="17">ಇದಲ್ಲದೆ, ಅದಕ್ಕೆ ತೋಳಬಲವಾಗಿ ಜನಾಂಗಗಳ ಮಧ್ಯೆ ಅದರ ನೆರಳನ್ನು ಆಶ್ರಯಿಸಿದವರು, ಅದರೊಂದಿಗೆ ಪಾತಾಳಕ್ಕಿಳಿದು, ಖಡ್ಗಹತರ ಜೊತೆಗೆ ಸೇರಿದರು.</verse>
				<verse number="18">“ ‘ನೀನು ಹೀಗೆ ಘನತೆಯಿಂದಲೂ ದೊಡ್ಡಸ್ತಿಕೆಯಿಂದಲೂ ಏದೆನಿನ ಯಾವ ಮರಗಳಿಗೆ ಸಮನಾಗಿರುವೆ? ಆದರೂ ನೀನು ಏದೆನಿನ ಮರಗಳ ಸಂಗಡ ಭೂಮಿಯ ಕೆಳಭಾಗಗಳಿಗೆ ದೂಡಿದವನಾಗುವೆ. ಸುನ್ನತಿಯಿಲ್ಲದವರ ಮಧ್ಯದಲ್ಲಿ ಖಡ್ಗದಿಂದ ಹತರಾದವರ ಸಂಗಡ ಮಲಗುವೆ. “ ‘ಇದೇ ಫರೋಹನನೂ ಅವನ ಎಲ್ಲಾ ಜನಸಮೂಹವೂ ಆಗಿವೆ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”</verse>
			</chapter>
			<chapter number="32">
				<verse number="1">ಹನ್ನೆರಡನೆಯ ವರ್ಷದ, ಹನ್ನೆರಡನೆಯ ತಿಂಗಳಿನ, ಮೊದಲನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದಿತು,</verse>
				<verse number="2">“ಮನುಷ್ಯಪುತ್ರನೇ, ಈಜಿಪ್ಟಿನ ಅರಸನಾದ ಫರೋಹನ ವಿಷಯವಾಗಿ ಪ್ರಲಾಪವನ್ನೆತ್ತಿ ಅವನಿಗೆ ಹೇಳಬೇಕಾದದ್ದೇನೆಂದರೆ: “ ‘ನೀನು ಜನಾಂಗಗಳಲ್ಲಿ ಸಿಂಹದ ಮರಿಗೆ ಸಮನಾಗಿರುವೆ, ಮತ್ತು ಸಮುದ್ರಗಳಲ್ಲಿರುವ ತಿಮಿಂಗಿಲದ ಹಾಗಿರುವೆ. ನೀನಿದ್ದ ನದಿಗಳನ್ನು ಭೇದಿಸಿಕೊಂಡು ಬಂದು ನೀರನ್ನು ನಿನ್ನ ಕಾಲುಗಳಿಂದ ಕಲಕಿ ಹೊಳೆಗಳನ್ನು ತುಳಿದು ಬದಿಮಾಡಿದೆ.</verse>
				<verse number="3">“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಆದ್ದರಿಂದ ನಾನು ಗುಂಪಾಗಿ ಕೂಡಿದ ಬಹಳ ಜನಾಂಗಗಳ ಮೇಲೆ ಬಲೆಯನ್ನು ಬೀಸುವೆನು. ಅವರು ನಿನ್ನನ್ನು ನನ್ನ ಬಲೆಯಲ್ಲಿ ಮೇಲಕ್ಕೆಳೆಯುವರು.</verse>
				<verse number="4">ಆಗ ನಾನು ನಿನ್ನನ್ನು ನೆಲದ ಮೇಲೆ ಹಾಕಿಬಿಡುವೆನು. ಬಯಲಿನ ಮೇಲೆ ಬಿಸಾಡುವೆನು. ಆಕಾಶದ ಪಕ್ಷಿಗಳನ್ನೆಲ್ಲಾ ನಿನ್ನ ಮೇಲೆ ಕೂರಿಸಿ, ಸಮಸ್ತ ಭೂಮಿಯ ಮೇಲಿನ ಮೃಗಗಳನ್ನು ನಿನ್ನಿಂದ ತೃಪ್ತಿಪಡಿಸುವೆನು.</verse>
				<verse number="5">ನಿನ್ನ ಮಾಂಸವನ್ನು ಬೆಟ್ಟಗಳ ಮೇಲೆ ಹಾಕಿ, ಆ ನಿನ್ನ ರಾಶಿಯಿಂದ ಕಣಿವೆಗಳನ್ನು ತುಂಬಿಸುವೆನು.</verse>
				<verse number="6">ನಾನು ನಿನ್ನ ರಕ್ತ ಪ್ರವಾಹದಿಂದ ದೇಶವನ್ನು ಬೆಟ್ಟಗಳ ತನಕ ತೋಯಿಸುವೆನು. ಹಳ್ಳಗಳು ನಿನ್ನ ಮಾಂಸದಿಂದ ತುಂಬುವುವು.</verse>
				<verse number="7">ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗಿ ಮಾಡಿ, ನಾನು ಸೂರ್ಯನನ್ನು ಮೋಡದಿಂದ ಮುಚ್ಚಿ ಬಿಡುವೆನು. ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು.</verse>
				<verse number="8">ಆಕಾಶದಲ್ಲಿ ಪ್ರಕಾಶಿಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು. ನಾನು ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="9">ಜನಾಂಗಗಳೊಳಗೆ ನೀನು ಅರಿಯದ ದೇಶಗಳಲ್ಲಿ, ನಿನ್ನ ವಿನಾಶದ ಸುದ್ದಿಯನ್ನು ಹರಡಿ ಅನೇಕ ಜನಗಳ ಹೃದಯದಲ್ಲಿ ಗಲಿಬಿಲಿ ಎಬ್ಬಿಸುವೆನು.</verse>
				<verse number="10">ನಾನು ಅನೇಕ ಜನರನ್ನು ನಿನ್ನ ವಿಷಯದಲ್ಲಿ ಭಯಭೀತಿಗೊಳ್ಳುವಂತೆ ಮಾಡುವೆನು, ನಾನು ಅವರ ಮುಂದೆ ನನ್ನ ಖಡ್ಗವನ್ನು ಬೀಸುವಾಗ ಅವರ ಅರಸರು ನಿನ್ನ ವಿಷಯದಲ್ಲಿ ಭಯಭ್ರಾಂತಿಗೊಳ್ಳುವರು. ನೀನು ಬೀಳುವ ಆ ದಿನದಲ್ಲಿ ಅವರು ಕ್ಷಣಕ್ಷಣಕ್ಕೆ ತಮ್ಮ ತಮ್ಮ ಪ್ರಾಣದ ಬಗ್ಗೆ ನಡುಗುವರು.</verse>
				<verse number="11">“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಬಾಬಿಲೋನಿನ ಅರಸನ ಖಡ್ಗವು ನಿನ್ನ ವಿರುದ್ಧ ಬರುವುದು.</verse>
				<verse number="12">ಪರಾಕ್ರಮಶಾಲಿಗಳ ಖಡ್ಗಗಳಿಂದ ಜನಾಂಗಗಳಲ್ಲಿ ಭಯಂಕರರಾಗಿರುವ ನಿನ್ನ ಸಮೂಹವನ್ನು ನಾನು ಬೀಳುವಂತೆ ಮಾಡುವೆನು. ಅವರು ಈಜಿಪ್ಟಿನ ಮಹತ್ತನ್ನು ಕೆಡಿಸುವರು. ಅದರ ಜನಸಮೂಹವೆಲ್ಲಾ ಹಾಳಾಗುವುದು.</verse>
				<verse number="13">ನಾನು ಆ ಬಹು ಪ್ರವಾಹಗಳ ಬಳಿಯಲ್ಲಿರುವ ಅದರ ಮೃಗಗಳನ್ನೆಲ್ಲಾ ನಾಶಮಾಡುವೆನು. ಆ ನೀರಿನಲ್ಲಿ ಇನ್ನು ಮೇಲೆ ಮನುಷ್ಯನ ಪಾದವಾಗಲಿ, ಪ್ರಾಣಿಗಳ ಗೊರಸಾಗಲಿ ಕಲಕಿಸುವುದಿಲ್ಲ.</verse>
				<verse number="14">ಆಮೇಲೆ ನಾನು ಆ ನೀರುಗಳನ್ನು ಆಳವಾಗಿ ಮಾಡುವೆನು. ಅದರ ನದಿಗಳನ್ನು ಎಣ್ಣೆಯ ಹಾಗೆ ಹರಿಯುವಂತೆ ಮಾಡುವೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="15">ನಾನು ಈಜಿಪ್ಟ್ ದೇಶವನ್ನು ಹಾಳು ಮಾಡಿ ಅದರ ಸೊತ್ತನ್ನೆಲ್ಲಾ ಧ್ವಂಸಮಾಡಿ ಅದರ ನಿವಾಸಿಗಳನ್ನೆಲ್ಲಾ ಹೊಡೆಯುವಾಗ ನಾನೇ ಯೆಹೋವ ದೇವರು ಎಂದು ಅವರಿಗೆ ತಿಳಿಯುವುದು.’</verse>
				<verse number="16">“ಇದು ಅವರು ಗೋಳಾಡುವಂತಹ ಗೋಳಾಟವಾಗಿದೆ. ಈಜಿಪ್ಟಿನ ವಿಷಯವಾಗಿಯೂ ಅದರ ಎಲ್ಲಾ ಜನಸಮೂಹದ ವಿಷಯವಾಗಿಯೂ ಜನಾಂಗಗಳ ಪುತ್ರಿಯರು ಇದನ್ನು ಕುರಿತು ಗೋಳಾಡುವರು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”</verse>
				<verse number="17">ಇದಲ್ಲದೆ ಹನ್ನೆರಡನೆಯ ವರ್ಷದ, ತಿಂಗಳಿನ ಹದಿನೈದನೆಯ ದಿನದಲ್ಲಿ ಯೆಹೋವ ದೇವರ ವಾಕ್ಯವು ನನಗೆ ಬಂದು ಹೇಳಿದ್ದೇನೆಂದರೆ:</verse>
				<verse number="18">“ಮನುಷ್ಯಪುತ್ರನೇ, ಈಜಿಪ್ಟಿನ ಜನಸಮೂಹದ ವಿಷಯವಾಗಿ ಗೋಳಾಡು; ಅದನ್ನು, ಅದರ ಸಂಗಡ ಘನವುಳ್ಳ ಜನಾಂಗಗಳ ಪುತ್ರಿಯರನ್ನು ಭೂಮಿಯ ಕೆಳಗಿನ ಭಾಗಗಳಿಗೆ ಕುಣಿಕೆಯೊಳಗೆ ಇಳಿಯುವವರ ಜೊತೆ ತಳ್ಳಿಬಿಡು.</verse>
				<verse number="19">‘ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವೆ? ಕೆಳಗೆ ಹೋಗು ಮತ್ತು ಸುನ್ನತಿಯಿಲ್ಲದವರ ಸಂಗಡ ಮಲಗು.’</verse>
				<verse number="20">ಅವರು ಖಡ್ಗದಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಖಡ್ಗವನ್ನು ಎಳೆಯಲಾಗುತ್ತದೆ. ಅವಳನ್ನು ತನ್ನ ಎಲ್ಲಾ ಗುಂಪುಗಳೊಂದಿಗೆ ಎಳೆದುಕೊಂಡು ಹೋಗಲಿ.</verse>
				<verse number="21">ಸತ್ತವರ ಕ್ಷೇತ್ರದೊಳಗಿಂದ ಪ್ರಬಲ ನಾಯಕರು ಈಜಿಪ್ಟ್ ಮತ್ತು ಅವಳ ಮಿತ್ರರಾಷ್ಟ್ರಗಳ ಬಗ್ಗೆ ಹೇಳುವರು, ‘ಅವರು ಇಳಿದು ಹೋಗಿ ಸುನ್ನತಿಯಿಲ್ಲದವರಾಗಿ ಮತ್ತು ಖಡ್ಗದಿಂದ ಹತರಾಗಿ ಮಲಗಿದ್ದಾರೆ.’</verse>
				<verse number="22">“ಅಲ್ಲಿ ಅಸ್ಸೀರಿಯ ಮತ್ತು ಅದರ ಎಲ್ಲಾ ಗುಂಪು ಇರುವುದು. ಅಸ್ಸೀರಿಯದ ಸುತ್ತಲೂ ಖಡ್ಗದಿಂದ ಹತರಾದವರ ಸಮಾಧಿಗಳಿರುವುವು;</verse>
				<verse number="23">ಅವರ ಸಮಾಧಿಗಳು ಕುಳಿಯ ಕಡೆಗಳಲ್ಲಿ ಇಡಲಾಗಿವೆ. ಅವಳ ಸೇನೆಯು ಸಮಾಧಿಯ ಸುತ್ತಲೂ ಇವೆ. ಜೀವಿತರ ದೇಶದಲ್ಲಿ ಭಯವನ್ನು ಹರಡಿದವರೆಲ್ಲರೂ ಖಡ್ಗದಿಂದ ಹತರಾದರು.</verse>
				<verse number="24">“ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ. ಅವರೆಲ್ಲರೂ ಖಡ್ಗದಿಂದ ಹತರಾದವರೇ. ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದು ಹೋದವರೇ. ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ.</verse>
				<verse number="25">ಅವರು ಅವರ ಎಲ್ಲಾ ಸಮೂಹಕ್ಕೂ ಹತರಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ. ಅದರ ಸುತ್ತಲೂ ಅವರ ಸಮಾಧಿಗಳಿವೆ. ಅವರೆಲ್ಲರೂ ಸುನ್ನತಿಯಿಲ್ಲದವರಾಗಿ ಮತ್ತು ಖಡ್ಗದಿಂದ ಹತರಾಗಿದ್ದಾರೆ. ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಕುಳಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡು ಹತರಾದವರ ಮಧ್ಯದಲ್ಲಿ ಇಡಲಾಗಿದೆ.</verse>
				<verse number="26">“ಅಲ್ಲಿ ಮೆಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ. ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿದ್ದರೂ ಸುನ್ನತಿಯಿಲ್ಲದೆ ಖಡ್ಗದಿಂದ ಹತರಾದವರು.</verse>
				<verse number="27">ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತಹ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಖಡ್ಗಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ. ಅವರ ಗುರಾಣಿಗಳು ಅವರ ಮೂಳೆಗಳ ಮೇಲೆ ಇಡಲಾದವು. ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರರಾಗಿದ್ದರೂ ಅವರ ಅಕ್ರಮಗಳು ಅವರ ಎಲುಬುಗಳ ಮೇಲೆ ಇರುವುವು.</verse>
				<verse number="28">“ಫರೋಹನೇ, ನೀನೂ ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲಾಗುವೆ. ಖಡ್ಗದಿಂದ ಹತರಾದವರ ಸಂಗಡ ಮಲಗುವೆ.</verse>
				<verse number="29">“ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಅದರ ಪ್ರಧಾನರೂ ಶೂರರಾಗಿದ್ದರೂ ಖಡ್ಗದಿಂದ ಹತರಾದವರ ಸಂಗಡ ಬಿದ್ದಿರುತ್ತಾರೆ; ಅವರು ಸುನ್ನತಿಯಿಲ್ಲದವರ ಸಂಗಡ ಮತ್ತು ಕುಣಿಗೆ ಇಳಿಯುವವರ ಸಂಗಡ ಹತರಾದವರು.</verse>
				<verse number="30">“ಅಲ್ಲಿ ಉತ್ತರದ ರಾಜಕುಮಾರರೂ ಸೀದೋನ್ಯರೆಲ್ಲರೂ ಹತರಾದವರೊಂದಿಗೆ ಇಳಿದು ಅಲ್ಲಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಖಡ್ಗದಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ.</verse>
				<verse number="31">“ಫರೋಹನು ಹಾಗೂ ಆತನ ಸೈನ್ಯವು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಜನಸಮೂಹದ ವಿಷಯವಾಗಿ ಸಮಾಧಾನ ಹೊಂದುವನು, ಫರೋಹನು ಮತ್ತು ಖಡ್ಗದಿಂದ ಹತರಾದ ಅವನ ಸಕಲ ಸೈನಿಕರೂ ಸಮಾಧಾನ ಹೊಂದುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="32">ಏಕೆಂದರೆ ನಾನು ಜೀವಿತರ ದೇಶದಲ್ಲಿ ಭಯವನ್ನು ಉಂಟುಮಾಡಿದ್ದೇ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಖಡ್ಗದಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ನಡುವೆ ಸೇರಿಹೋಗುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”</verse>
			</chapter>
			<chapter number="33">
				<verse number="1">ಯೆಹೋವ ದೇವರ ವಾಕ್ಯವು ನನಗೆ ಬಂದು:</verse>
				<verse number="2">“ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ನಾನು ಬಂದು ದೇಶದ ಮೇಲೆ ಯಾವಾಗ ಖಡ್ಗವನ್ನು ತರುವೆನೋ ಆಗ ಆ ದೇಶದ ಜನರು ತಮ್ಮ ಪ್ರಾಂತದ ಒಬ್ಬ ಮನುಷ್ಯನನ್ನು ಆರಿಸಿ ತಮಗೆ ಕಾವಲುಗಾರನನ್ನಾಗಿ ಇಟ್ಟರೆ,</verse>
				<verse number="3">ಅವನು ಖಡ್ಗವು ದೇಶದ ಮೇಲೆ ಬರುವುದನ್ನು ನೋಡಿ, ಕೊಂಬನ್ನೂದಿ ಜನರನ್ನು ಎಚ್ಚರಿಸಲಿ,</verse>
				<verse number="4">ಯಾವನು ಕೊಂಬಿನ ಧ್ವನಿಯನ್ನು ಕೇಳಿ ಎಚ್ಚರವಾಗುವುದಿಲ್ಲವೋ ಅವನನ್ನು ಖಡ್ಗವು ನಾಶಮಾಡಿದರೆ ಅವನ ಸಾವಿಗೆ ಅವನೇ ಹೊಣೆಯಾಗುವನು.</verse>
				<verse number="5">ಏಕೆಂದರೆ ಅವನು ಕೊಂಬಿನ ಧ್ವನಿಯನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ. ತನ್ನ ಸಾವಿಗೆ ತಾನೇ ಕಾರಣನಾಗುವನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದನು.</verse>
				<verse number="6">ಆದರೆ ಕಾವಲುಗಾರನು ಬರುವ ಖಡ್ಗವನ್ನು ನೋಡಿ, ಒಂದು ವೇಳೆ ಕೊಂಬನ್ನು ಊದದೆ ಜನರನ್ನೂ ಎಚ್ಚರಿಸದೆ ಹೋದರೆ, ಆಗ ಖಡ್ಗವು ಬಿದ್ದು ಆ ಜನರೊಳಗೆ ಯಾರನ್ನಾದರೂ ನಾಶಮಾಡಿದರೆ, ಅವನು ತನ್ನ ಪಾಪದಲ್ಲಿಯೇ ನಾಶವಾಗುವನು. ಆದರೆ ನಾನು ಅವನ ಸಾವಿಗೆ ಕಾವಲುಗಾರನನ್ನೇ ಹೊಣೆಮಾಡುವೆನು.’</verse>
				<verse number="7">“ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಆದ್ದರಿಂದ ನೀನು ನನ್ನ ಬಾಯಿಂದ ಹೊರಡುವ ವಾಕ್ಯವನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.</verse>
				<verse number="8">ಯಾವಾಗ ನಾನು ದುಷ್ಟನಿಗೆ, ‘ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವೆ,’ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ಅವನ ದುರ್ಮಾರ್ಗಗಳಿಂದ ತಪ್ಪಿಸಲು ಅವನನ್ನು ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ತನ್ನ ಪಾಪಗಳಿಂದಲೇ ಸಾಯಬೇಕಾಗುವದು; ಆದರೆ ಅವನ ಸಾವಿಗೆ ನಿನ್ನನ್ನೇ ಹೊಣೆಮಾಡುವೆನು.</verse>
				<verse number="9">ಆದರೆ ನೀನು ದುಷ್ಟನನ್ನು ಅವನ ದುರ್ಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತಿರುಗಿಕೊಳ್ಳದೆ ಹೋದರೆ ಅವನು ತನ್ನ ಪಾಪಗಳಿಂದಲೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.</verse>
				<verse number="10">“ಆದ್ದರಿಂದ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು: ‘ನೀವು ಹೇಳುತ್ತಿರುವುದು ಇದನ್ನೇ: “ನಮ್ಮ ಅಪರಾಧಗಳೂ ನಮ್ಮ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲೇ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು ಎಂದು ಹೇಳುವಿರಲ್ಲಾ?” ’</verse>
				<verse number="11">ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’</verse>
				<verse number="12">“ಆದ್ದರಿಂದ, ನರಪುತ್ರನೇ, ನೀನು ನಿನ್ನ ಜನರ ಮಕ್ಕಳಿಗೆ ಹೇಳು: ‘ಒಬ್ಬ ನೀತಿವಂತನು ಅವಿಧೇಯನಾದರೆ, ಆ ವ್ಯಕ್ತಿಯ ಹಿಂದಿನ ನೀತಿಯು ಯಾವುದಕ್ಕೂ ಲೆಕ್ಕವಿಲ್ಲ. ಹಾಗೆಯೇ ದುಷ್ಟನು ಪಶ್ಚಾತ್ತಾಪಪಟ್ಟರೆ, ಆ ವ್ಯಕ್ತಿಯ ಹಿಂದಿನ ದುಷ್ಟತನವು ಖಂಡನೆಯನ್ನು ತರುವುದಿಲ್ಲ. ಪಾಪಮಾಡುವ ನೀತಿವಂತನು ಹಿಂದೆ ನೀತಿವಂತರಾಗಿದ್ದರೂ ಬದುಕಲು ಬಿಡುವುದಿಲ್ಲ.’</verse>
				<verse number="13">ನಾನು ನೀತಿವಂತನಿಗೆ, ನೀನು ನಿಶ್ಚಯವಾಗಿ ಬದುಕುವೆ ಎಂದು ಹೇಳುವಾಗ, ಅವನು ಒಂದು ವೇಳೆ ಅವನ ಸ್ವಂತ ನೀತಿಯನ್ನು ನಂಬಿ ಅನ್ಯಾಯವನ್ನು ಮಾಡಿದರೆ ಅವನು ಮಾಡಿರುವ ಎಲ್ಲಾ ಸುಕೃತ್ಯಗಳು ಅವನ ಲೆಕ್ಕಕ್ಕೆ ಸೇರುವುದಿಲ್ಲ. ಅವನು ಮಾಡಿರುವ ಅಕ್ರಮಗಳಿಂದಲೇ ಅವನು ಸಾಯುವನು.</verse>
				<verse number="14">ನಾನು ದುಷ್ಟನಿಗೆ, ‘ನೀನು ನಿಶ್ಚಯವಾಗಿ ಸಾಯುವೆ’ ಎಂದು ಹೇಳುವಾಗ ಅವನು ಪಾಪದಿಂದ ಬಿಟ್ಟು ತಿರುಗಿಕೊಂಡು ಮತ್ತು ನ್ಯಾಯವನ್ನೂ ನೀತಿಯನ್ನೂ ನಡೆಸಿದರೆ</verse>
				<verse number="15">ದುಷ್ಟನು ತನ್ನ ಒತ್ತೆಯನ್ನು ಮತ್ತು ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು ಅನ್ಯಾಯವನ್ನು ಮಾಡದೆ ಜೀವನಾಧಾರವಾದ ನಿಯಮಗಳಲ್ಲಿ ನಡೆದರೆ ಅವನು ಸಾಯದೆ ಖಂಡಿತವಾಗಿ ಬದುಕುವನು.</verse>
				<verse number="16">ಅವನು ಮಾಡಿದ ಪಾಪಗಳಲ್ಲಿ ಒಂದಾದರೂ ಅವನ ಲೆಕ್ಕಕ್ಕೆ ಸೇರಿಸಲಾಗುವುದಿಲ್ಲ. ಅವನು ನ್ಯಾಯವನ್ನೂ ನೀತಿಯನ್ನೂ ಮಾಡಿದ್ದರಿಂದ ನಿಶ್ಚಯವಾಗಿ ಬದುಕುವನು.</verse>
				<verse number="17">“ಆದರೂ ನಿನ್ನ ಜನರ ಮಕ್ಕಳು, ‘ಯೆಹೋವ ದೇವರ ಮಾರ್ಗವು ಸರಿಯಲ್ಲ’ ಎಂದು ಹೇಳುತ್ತಾರೆ. ಅವರಿಗಾದರೋ ಅವರ ಮಾರ್ಗವೇ ನೀತಿಯುಕ್ತವಲ್ಲ.</verse>
				<verse number="18">ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು, ಅಕ್ರಮವನ್ನು ಮಾಡುವನೋ ಅವನು ಖಂಡಿತವಾಗಿಯೂ ಅದರಲ್ಲಿಯೇ ಸಾಯುವನು.</verse>
				<verse number="19">ಆದರೆ ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು, ನೀತಿನ್ಯಾಯವನ್ನು ಅನುಸರಿಸಿದರೆ ಅವನು ಅವುಗಳಿಂದ ಉಳಿಯುವನು.</verse>
				<verse number="20">ಆದರೂ, ‘ನೀವು ಯೆಹೋವ ದೇವರ ಮಾರ್ಗ ನೀತಿಯುಕ್ತವಲ್ಲ,’ ಅನ್ನುತ್ತೀರಿ. ಇಸ್ರಾಯೇಲಿನ ಮನೆತನದವರೇ, ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಿಮ್ಮ ಮಾರ್ಗಗಳ ಪ್ರಕಾರ ನಾನು ನ್ಯಾಯತೀರಿಸುವೆನು.”</verse>
				<verse number="21">ನಮ್ಮ ಸೆರೆಯ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ, ಯೆರೂಸಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು, “ಪಟ್ಟಣವು ನಾಶವಾಗಿದೆ,” ಎಂದು ಹೇಳಿದನು.</verse>
				<verse number="22">ಆಗ ಅವನು ತಪ್ಪಿಸಿಕೊಂಡು ಬರುವುದಕ್ಕಿಂತ ಮೊದಲೇ, ಸಾಯಂಕಾಲದಲ್ಲಿ ಯೆಹೋವ ದೇವರ ಕೈ ನನ್ನ ಮೇಲೆ ಇತ್ತು. ಅವನು ಮುಂಜಾನೆ ನನ್ನ ಬಳಿಗೆ ಬರುವ ತನಕ ನನ್ನ ಬಾಯಿ ತೆರೆಯಲಾಗಿತ್ತು. ನನ್ನ ಬಾಯಿ ತೆರೆದಿತ್ತು. ನಾನು ಮೌನವಾಗಿರಲಿಲ್ಲ.</verse>
				<verse number="23">ಆಮೇಲೆ ಯೆಹೋವ ದೇವರ ವಾಕ್ಯವು ನನಗೆ ಬಂದಿತು:</verse>
				<verse number="24">“ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು ಹೀಗೆ ಹೇಳುತ್ತಾರೆ, ‘ಅಬ್ರಹಾಮನು ಒಬ್ಬೊಂಟಿಗನಾಗಿದ್ದರೂ ಈ ದೇಶ ಅವನಿಗೆ ಸೊತ್ತಾಗಿ ಸಿಕ್ಕಿತು. ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸೊತ್ತಾಗಿ ಕೊಡಲಾಗಿದೆ,’ ಎಂದು ಹೇಳುತ್ತಾರೆ.</verse>
				<verse number="25">ಆದ್ದರಿಂದ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀವು ಮಾಂಸವನ್ನು ರಕ್ತದ ಸಂಗಡ ತಿನ್ನುವಿರಲ್ಲವೇ? ನಿಮ್ಮ ಕಣ್ಣುಗಳನ್ನು ನಿಮ್ಮ ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವಿರಲ್ಲಾ, ಹೀಗಾದರೆ ನೀವು ದೇಶವನ್ನು ಸ್ವಾಧೀನಪಡಿಸಿಕೊಂಡೀರಾ?</verse>
				<verse number="26">ನೀವು ನಿಮ್ಮ ಖಡ್ಗದ ಮೇಲೆ ಭರವಸೆ ಇಟ್ಟು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ನಿಮ್ಮ ನೆರೆಯವನ ಹೆಂಡತಿಯನ್ನು ಕೆಡಿಸುವಿರಿ. ಹೀಗಾದರೆ ನೀವು ದೇಶವನ್ನು ಸ್ವಾಧೀನಪಡಿಸಿಕೊಂಡಿರೇನು?’</verse>
				<verse number="27">“ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಖಡ್ಗದಿಂದ ಬೀಳುವರು. ಬಯಲಿನಲ್ಲಿರುವವರನ್ನು ಕಾಡುಮೃಗಗಳಿಗೆ ಆಹಾರವನ್ನಾಗಿ ಕೊಡುತ್ತೇನೆ. ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವವರು ವ್ಯಾಧಿಗಳಿಂದ ಸಾಯುವರು.</verse>
				<verse number="28">ನಾನು ಈ ದೇಶವನ್ನು ಹಾಳುಪಾಳುಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವುದು. ಇಸ್ರಾಯೇಲಿನ ಪರ್ವತಗಳು ಹಾಳಾಗಿರುವುದರಿಂದ ಯಾರೂ ಅದರ ಮೂಲಕ ಹಾದು ಹೋಗುವುದಿಲ್ಲ.</verse>
				<verse number="29">ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.’</verse>
				<verse number="30">“ಮನುಷ್ಯಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲೂ ಮನೆಯ ಬಾಗಿಲುಗಳಲ್ಲೂ ನಿಂತು ನಿಜ ಪ್ರಸ್ತಾಪವನ್ನೆತ್ತಿ ಒಬ್ಬರಿಗೊಬ್ಬರು, ‘ಯೆಹೋವ ದೇವರ ಬಾಯಿಂದ ಹೊರಟ ಮಾತೇನೆಂದು ಕೇಳೋಣ ಬನ್ನಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.</verse>
				<verse number="31">ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು. ಅವರು ನಿನ್ನ ವಾಕ್ಯಗಳನ್ನು ಕೇಳುವರು. ಆದರೆ ಅವರು ಅವುಗಳನ್ನು ಪಾಲಿಸುವುದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು. ಆದರೆ ಅವರ ಹೃದಯವು ಅನ್ಯಾಯದ ಲಾಭದ ಕಡೆಗೆ ಹೋಗುವುದು.</verse>
				<verse number="32">ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ ಮಧುರಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.</verse>
				<verse number="33">“ಯಾವಾಗ ಇದು ಬರುತ್ತದೋ ಆಗ ಅವರಿಗೆ ಪ್ರವಾದಿಯು ತಮ್ಮ ಸಂಗಡ ಇದ್ದಾನೆಂದು ತಿಳಿಯುವುದು.”</verse>
			</chapter>
			<chapter number="34">
				<verse number="1">ಯೆಹೋವ ದೇವರ ವಾಕ್ಯವು ನನಗೆ ಬಂದಿತು:</verse>
				<verse number="2">“ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸಿ ಅವರಿಗೆ ಹೇಳು: ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬರಿಗೆ ಕಷ್ಟ! ಕುರುಬರು ಮಂದೆಗಳನ್ನು ಮೇಯಿಸಬಾರದೋ?</verse>
				<verse number="3">ನೀವು ಮೊಸರನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ನೀವು ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿಸುವುದಿಲ್ಲ.</verse>
				<verse number="4">ನೀವು ದುರ್ಬಲರನ್ನು ಬಲಪಡಿಸಲಿಲ್ಲ ಅಥವಾ ರೋಗಿಗಳನ್ನು ಗುಣಪಡಿಸಲಿಲ್ಲ ಅಥವಾ ಮುರಿದದ್ದನ್ನು ಕಟ್ಟುವುದಿಲ್ಲ. ಕಳೆದುಹೋದದ್ದನ್ನು ಹುಡುಕುವುದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರುವುದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.</verse>
				<verse number="5">ಅವು ಚದರಿಹೋದವು. ಏಕೆಂದರೆ ಅಲ್ಲಿ ಕುರುಬರಿಲ್ಲ; ಅವರು ಚದರಿಹೋದಾಗ ಎಲ್ಲಾ ಕಾಡುಮೃಗಗಳಿಗೆ ಆಹಾರವಾದವು.</verse>
				<verse number="6">ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ. ಹೌದು, ನನ್ನ ಮಂದೆಯು ಎಲ್ಲಾ ಭೂಮಿಯ ಮೇಲೆಲ್ಲಾ ಚದರಿಹೋಗಿದೆ. ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.</verse>
				<verse number="7">“ ‘ಆದ್ದರಿಂದ ಕುರುಬರೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ.</verse>
				<verse number="8">ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನಿಶ್ಚಯವಾಗಿ ನನ್ನ ಮಂದೆಯು ಕೊಳ್ಳೆಯಾದುದರಿಂದಲೂ ನನ್ನ ಮಂದೆಯು ಕುರುಬನಿಲ್ಲದೆ ಕಾಡುಮೃಗಗಳಿಗೆಲ್ಲಾ ಆಹಾರವಾದದ್ದರಿಂದಲೂ ನನ್ನ ಕುರುಬರು ನನ್ನ ಮಂದೆಯನ್ನು ಹುಡುಕದೆ ಇದ್ದುದರಿಂದಲೂ ಕುರುಬರು ತಮ್ಮನ್ನು ಮೇಯಿಸಿಕೊಂಡರೇ ಹೊರತು ತಮ್ಮ ಕುರಿಗಳನ್ನು ಮೇಯಿಸದೆ ಇದ್ದುದರಿಂದಲೂ</verse>
				<verse number="9">ಕುರುಬರೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ.</verse>
				<verse number="10">ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ. ನನ್ನ ಮಂದೆಯನ್ನು ಅವರ ಕೈಯಿಂದ ವಿಚಾರಿಸುವೆನು. ಅವರು ಮಂದೆ ಮೇಯಿಸುವುದನ್ನು ನಿಲ್ಲಿಸಿಬಿಡುತ್ತೇನೆ, ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿಕೊಳ್ಳರು. ಏಕೆಂದರೆ ನಾನು ನನ್ನ ಮಂದೆಯನ್ನು ಅವರಿಗೆ ಆಹಾರವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.</verse>
				<verse number="11">“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನೇ ನನ್ನ ಕುರಿಗಳನ್ನು ಹುಡುಕಿ ಅವುಗಳನ್ನು ಮೇಯಿಸುತ್ತೇನೆ.</verse>
				<verse number="12">ಕುರುಬನು ಚದರಿದ್ದ ತನ್ನ ಕುರಿಗಳ ಮಧ್ಯದಲ್ಲಿ ಇರುವ ದಿನದಲ್ಲಿ ತನ್ನ ಮಂದೆಯನ್ನು ಹುಡುಕುವ ಪ್ರಕಾರ ನಾನು ನನ್ನ ಕುರಿಗಳನ್ನು ಹುಡುಕಿ, ಕಾರ್ಮುಗಿಲಿನ ಕಾರ್ಗತ್ತಲಿನ ದಿನದಲ್ಲಿ ಚೆಲ್ಲಾಪಿಲ್ಲಿಯಾದ ಅವುಗಳನ್ನು ಎಲ್ಲಾ ಸ್ಥಳಗಳಿಂದ ಬಿಡಿಸುವೆನು.</verse>
				<verse number="13">ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳನ್ನು ಸ್ವಂತ ದೇಶಕ್ಕೆ ತರುವೆನು. ಅವುಗಳನ್ನು ಇಸ್ರಾಯೇಲಿನ ಪರ್ವತಗಳ ಮೇಲೆ ಹಳ್ಳಗಳಲ್ಲಿ ನಿವಾಸಿಗಳುಳ್ಳ ಎಲ್ಲಾ ದೇಶಗಳಲ್ಲಿಯೂ ಮೇಯಿಸುವೆನು.</verse>
				<verse number="14">ನಾನು ಒಳ್ಳೆಯ ಮೇವಿನಲ್ಲಿ ಅವುಗಳನ್ನು ಮೇಯಿಸುವೆನು. ಇಸ್ರಾಯೇಲಿನ ಎತ್ತರವಾದ ಪರ್ವತಗಳಲ್ಲಿ ಮಂದೆಯು ಇರುವುದು. ಅವುಗಳು ಆ ಒಳ್ಳೆಯ ಮಂದೆಯಲ್ಲಿ ಮಲಗಿ ಇಸ್ರಾಯೇಲಿನ ಪರ್ವತಗಳ ಮೇಲೆ ಪುಷ್ಟಿಯುಳ್ಳ ಮೇವನ್ನು ಮೇಯುವುವು.</verse>
				<verse number="15">ನಾನೇ ನನ್ನ ಮಂದೆಯನ್ನು ಮೇಯಿಸಿ, ನಾನೇ ಅವುಗಳನ್ನು ಮಲಗಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="16">ಕಳೆದುಹೋದದ್ದನ್ನು ನಾನೇ ಹುಡುಕುವೆನು. ದಾರಿ ತಪ್ಪಿದ್ದನ್ನು ನಾನೇ ಮತ್ತೆ ತರುವೆನು, ಮುರಿದ ಅಂಗವನ್ನು ನಾನೇ ಕಟ್ಟುವೆನು. ದುರ್ಬಲವಾದುದನ್ನು ಬಲಗೊಳಿಸುವೆನು, ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸುವೆನು. ನಾನು ನ್ಯಾಯದಿಂದ ಮಂದೆಯನ್ನು ಮೇಯಿಸುವೆನು.</verse>
				<verse number="17">“ ‘ನಿಮಗೆ ನನ್ನ ಮಂದೆಯೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಕುರಿಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು.</verse>
				<verse number="18">ಒಳ್ಳೆಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಹೊಲಸು ಮಾಡಿದ್ದು ಸಣ್ಣ ಕೆಲಸವೋ?</verse>
				<verse number="19">ನನ್ನ ಮಂದೆಗಳಾದರೋ ನಿಮ್ಮ ಕಾಲಲ್ಲಿ ಕಸಮಾಡಿದ್ದನ್ನು ತಿನ್ನುವುವು. ನಿನ್ನ ಕಾಲಿನಿಂದ ಕಲಕಿ ಹೊಲಸಾದದ್ದನ್ನು ಕುಡಿಯುವುವು.</verse>
				<verse number="20">“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ನಿಮಗೆ ಹೀಗೆ ಹೇಳುತ್ತಾರೆ, ನಾನು, ನಾನೇ ಕೊಬ್ಬಿದ ಕುರಿಗಳಿಗೂ ಮತ್ತು ಬಡಕಲಾದ ಕುರಿಗಳಿಗೂ ನ್ಯಾಯತೀರಿಸುತ್ತೇನೆ.</verse>
				<verse number="21">ಏಕೆಂದರೆ ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿಬಿಟ್ಟಿರಿ.</verse>
				<verse number="22">ಆದ್ದರಿಂದ ನಾನು ನನ್ನ ಮಂದೆಯನ್ನು ಕಾಪಾಡುತ್ತೇನೆ. ಅವು ಎಂದೆಂದೂ ಕೊಳ್ಳೆಯಾಗುವುದಿಲ್ಲ. ನಾನು ಕುರಿಮೇಕೆಗಳ ಮಧ್ಯೆ ನ್ಯಾಯತೀರಿಸುವೆನು.</verse>
				<verse number="23">ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.</verse>
				<verse number="24">ಯೆಹೋವ ದೇವರಾದ ನಾನೇ ಅವುಗಳಿಗೆ ದೇವರಾಗಿರುವೆನು; ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವೆನೆಂದು ಯೆಹೋವ ದೇವರಾದ ನಾನೇ ಅದನ್ನು ಮಾತಾಡಿದ್ದೇನೆ.</verse>
				<verse number="25">“ ‘ಅವರ ಸಂಗಡ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ದುಷ್ಟಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು. ಆದ್ದರಿಂದ ಅವರು ನಿರ್ಭಯವಾಗಿ ಮರುಭೂಮಿಯಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.</verse>
				<verse number="26">ಅವರನ್ನೂ ನನ್ನ ಪರ್ವತಗಳ ಸುತ್ತಣ ಪ್ರದೇಶಗಳನ್ನೂ ಆಶೀರ್ವಾದವನ್ನಾಗಿ ಮಾಡುವೆನು. ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು. ದಿವ್ಯಾಶೀರ್ವಾದದ ಮಳೆಯಾಗುವುದು.</verse>
				<verse number="27">ಬಯಲಿನ ಮರವು ಅದರ ಫಲವನ್ನು ಕೊಡುವುದು. ಭೂಮಿಯು ಅದರ ಆದಾಯವನ್ನು ಕೊಡುವುದು. ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು. ನಾನೇ ಅದರ ನೊಗದ ಬಂಧನಗಳ್ನು ಬಿಡಿಸಿ ಅವರಿಂದ ಸೇವೆಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಯೆಹೋವ ದೇವರೆಂದು ಅವರು ತಿಳಿಯುವರು.</verse>
				<verse number="28">ಅವರು ಇನ್ನು ಮೇಲೆ ಇತರ ಜನಾಂಗಗಳಿಗೆ ಕೊಳ್ಳೆಯಾಗುವುದಿಲ್ಲ; ಕಾಡುಮೃಗಗಳು ಅವರನ್ನು ತಿನ್ನುವುದಿಲ್ಲ. ಯಾರೂ ಅವರನ್ನು ಹೆದರಿಸುವವರಿಲ್ಲದೆ ನಿರ್ಭಯವಾಗಿ ವಾಸಿಸುವರು.</verse>
				<verse number="29">ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು. ಇನ್ನು ಮೇಲೆ ಅವರು ದೇಶದಲ್ಲಿ ಬರಗಾಲದಿಂದ ನಾಶವಾಗುವುದಿಲ್ಲ. ಅವರು ಇತರ ಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವುದೇ ಇಲ್ಲ.</verse>
				<verse number="30">ಆಗ ಅವರು ತಮ್ಮ ಯೆಹೋವ ದೇವರೆಂಬ ನಾನೇ ಅವರ ಸಂಗಡ ಇರುವೆನೆಂದೂ ಇಸ್ರಾಯೇಲಿನ ಮನೆತನದವರಾದ ಅವರೇ ನನ್ನ ಜನರಾಗಿರುವರೆಂದೂ ತಿಳಿಯುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="31">ನೀವು ನನ್ನ ಕುರಿಗಳು, ನನ್ನ ಹುಲ್ಲುಗಾವಲಿನ ಕುರಿಗಳು, ಮತ್ತು ನಾನು ನಿಮ್ಮ ದೇವರು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”</verse>
			</chapter>
			<chapter number="35">
				<verse number="1">ಯೆಹೋವ ದೇವರ ವಾಕ್ಯವು ನನಗೆ ಬಂದಿತು,</verse>
				<verse number="2">“ಮನುಷ್ಯಪುತ್ರನೇ, ನೀನು ಸೇಯೀರ್ ಪರ್ವತಕ್ಕೆ ಅಭಿಮುಖನಾಗಿ ಅದಕ್ಕೆ ವಿರೋಧವಾಗಿ ಪ್ರವಾದಿಸಿ,</verse>
				<verse number="3">ಅದಕ್ಕೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ಸೇಯೀರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಾನು ನನ್ನ ಕೈಯನ್ನು ನಿನಗೆ ವಿರುದ್ಧವಾಗಿ ಚಾಚುತ್ತೇನೆ. ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುತ್ತೇನೆ.</verse>
				<verse number="4">ನಾನು ನಿನ್ನ ಪಟ್ಟಣಗಳನ್ನು ನಾಶಮಾಡಲು ನೀನು ಹಾಳಾಗುವೆ; ಆಗ ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ.</verse>
				<verse number="5">“ ‘ನೀನು ಇಸ್ರಾಯೇಲರ ಮೇಲೆ ದೀರ್ಘ ದ್ವೇಷವಿಟ್ಟು ಅವರ ಅಪರಾಧದ ಕಾಲದಲ್ಲಿ ಅವರನ್ನು ಖಡ್ಗದ ಬಾಯಿಗೆ ಗುರಿಮಾಡಿದ ಕಾರಣ ಅವರ ಶಿಕ್ಷೆಯು ತಪ್ಪದು.</verse>
				<verse number="6">ಆದುದರಿಂದ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯವಾಗಿ ಮಾಡುವೆನು. ರಕ್ತಪಾತವು ನಿನ್ನನ್ನು ಬೆನ್ನಟ್ಟುವುದು. ನೀನು ರಕ್ತಪಾತಕ್ಕೆ ಹೇಸದೆ ಹೋದಕಾರಣ ರಕ್ತ ಪ್ರವಾಹವೇ ನಿನ್ನ ಬೆನ್ನು ಹತ್ತುವುದು.</verse>
				<verse number="7">ಹೀಗೆ ನಾನು ಸೇಯೀರ್ ಪರ್ವತವನ್ನು ಸಂಪೂರ್ಣ ಹಾಳುಮಾಡುವೆನು. ಅದರೊಳಗೆ ಹಾದುಹೋಗುವವನನ್ನೂ ಹಿಂತಿರುಗುವವನನ್ನೂ ಕಡಿದುಹಾಕುವೆನು.</verse>
				<verse number="8">ಅದರ ಪರ್ವತಗಳನ್ನು ನಿನ್ನವರ ಹೆಣಗಳಿಂದ ತುಂಬಿಸುವರು. ನಿನ್ನ ಖಡ್ಗದಿಂದ ಹತರಾದವರು ನಿನ್ನ ಹಳ್ಳಕೊಳ್ಳಗಳಲ್ಲಿಯೂ ಪರ್ವತಗಳ ಮೇಲೆಯೂ ಬೀಳುವರು.</verse>
				<verse number="9">ನಾನು ನಿನ್ನನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ನಿನ್ನ ನಗರಗಳು ನಿರ್ಜನವಾಗುವುವು, ಆಗ ನಾನೇ ಯೆಹೋವ ದೇವರೆಂದು ನೀನು ತಿಳಿದುಕೊಳ್ಳುವೆ.</verse>
				<verse number="10">“ ‘ಯೆಹೋವ ದೇವರು ಅವುಗಳಲ್ಲಿದ್ದರೂ ಈ ಎರಡು ಜನಾಂಗಗಳೂ ಈ ಎರಡು ರಾಜ್ಯಗಳೂ ನನ್ನ ವಶವಾಗುವುವು. ಎಂದೂ ನೀನು ಹೇಳಿದ್ದರಿಂದ ನಾವು ಅವುಗಳನ್ನು ವಶಮಾಡಿಕೊಳ್ಳುತ್ತೇವೆ.</verse>
				<verse number="11">ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಾನು ನಿನ್ನ ಕೋಪದ ಪ್ರಕಾರವೂ ನೀನು ದ್ವೇಷದಿಂದ ಅವರಿಗೆ ವಿರುದ್ಧವಾಗಿ ನಡೆಸಿದ ಹೊಟ್ಟೆಕಿಚ್ಚಿನ ಪ್ರಕಾರವೂ ನಿನಗೆ ನ್ಯಾಯತೀರಿಸಿದಾಗ ನಾನು ಅವರ ಮಧ್ಯದಲ್ಲಿ ನನ್ನನ್ನು ತಿಳಿಯಪಡಿಸುತ್ತೇನೆ.</verse>
				<verse number="12">ಆಗ ನಾನೇ ಯೆಹೋವನೆಂದು ನೀನು ತಿಳಿಯುವೆ ಮತ್ತು ಇಸ್ರಾಯೇಲಿನ ಪರ್ವತಗಳ ವಿಷಯವಾಗಿ, “ಅವು ಹಾಳಾಗಿವೆ ನಮಗೆ ನುಂಗುವುದಕ್ಕೆ ಕೊಡಲಾಗಿವೆ,” ಎಂದು ಹೇಳಿ ಮಾತನಾಡಿದ ನಿನ್ನ ಎಲ್ಲಾ ದೂಷಣೆಗಳನ್ನು ಯೆಹೋವ ದೇವರೆಂಬ ನಾನೇ ಕೇಳಿರುವೆನೆಂದು ತಿಳಿಯುವೆ.</verse>
				<verse number="13">ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ.</verse>
				<verse number="14">ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಯಾವಾಗ ಸಂಪೂರ್ಣ ಭೂಮಿಯು ಸಂತೋಷಪಡುತ್ತದೋ ಆಗ ನಾನು ನಿನ್ನನ್ನು ಹಾಳುಮಾಡುವೆನು.</verse>
				<verse number="15">ಹೇಗೆ ನೀನು ಇಸ್ರಾಯೇಲರ ಸ್ವಾಸ್ತ್ಯದ ನಾಶನಕ್ಕೆ ಹೇಗೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಸೇಯೀರ್ ಪರ್ವತವೇ ಮತ್ತು ಸಮಸ್ತ ಎದೋಮೇ ಸಂಪೂರ್ಣವಾಗಿ ಹಾಳಾಗುವೆ. ಆಗ ನಾನೇ ಯೆಹೋವ ದೇವರೆಂದು ನಿಮಗೆ ತಿಳಿಯುವುದು.’ ”</verse>
			</chapter>
			<chapter number="36">
				<verse number="1">“ನರಪುತ್ರನೇ, ಇಸ್ರಾಯೇಲ್ ಪರ್ವತಗಳ ಕಡೆಗೆ ಪ್ರವಾದಿಸು. ಹೇಳು, ‘ಇಸ್ರಾಯೇಲ್ ಪರ್ವತಗಳೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ.</verse>
				<verse number="2">ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಏಕೆಂದರೆ ನಿನ್ನ ಶತ್ರುವು ನಿನಗೆ ವಿರೋಧವಾಗಿ, “ಆಹಾ, ಪೂರ್ವದ ಉತ್ತಮ ಸ್ಥಳಗಳು ನಮ್ಮ ಸೊತ್ತಾದವು,” ಎಂದು ಹೇಳುವರು. ’</verse>
				<verse number="3">ಆದ್ದರಿಂದ ನೀನು ಪ್ರವಾದಿಸಿ ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಅವರು ನಿನ್ನನ್ನು ಹಾಳು ಮಾಡಿ ಎಲ್ಲಾ ಕಡೆಗಳಿಂದಲೂ ನಿನ್ನನ್ನು ತುಳಿದುಬಿಟ್ಟರು. ನೀವು ಇತರ ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು ಹರಟೆಗಾರರ ಬಾಯಿಗೆ ಬಿದ್ದು ಜನರ ನಿಂದೆಗೆ ಗುರಿಯಾಗಿದ್ದೀರಿ.</verse>
				<verse number="4">ಆದ್ದರಿಂದ ಇಸ್ರಾಯೇಲ್ ಪರ್ವತಗಳೇ, ನೀವು ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ, ಪರ್ವತಗಳಿಗೂ ಬೆಟ್ಟಗಳಿಗೂ ನದಿಗಳಿಗೂ ಕಣಿವೆಗಳಿಗೂ ಹಾಳಾದ ಒಣಭೂಮಿಗೂ ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ</verse>
				<verse number="5">ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಶ್ಚಯವಾಗಿ ನನ್ನ ರೋಷದ ಬೆಂಕಿಯಿಂದ ಇತರ ಜನಾಂಗಗಳಲ್ಲಿ ಉಳಿದವರಿಗೂ ಎದೋಮಿನವರೆಲ್ಲರಿಗೂ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡಿದ್ದಾರೆ. ಅವರು ಅದರ ಹುಲ್ಲುಗಾವಲನ್ನು ಸಹ ಸೂರೆಮಾಡಬೇಕೆಂದಿದ್ದಾರೆ.’</verse>
				<verse number="6">ಆದ್ದರಿಂದ ಇಸ್ರಾಯೇಲ್ ದೇಶಕ್ಕೆ ಸಂಬಂಧಪಟ್ಟ ಹಾಗೆ ಪ್ರವಾದಿಸು. ಪರ್ವತಗಳಿಗೂ ಬೆಟ್ಟಗಳಿಗೂ ಹಳ್ಳಕೊಳ್ಳಗಳಿಗೂ ಹೇಳಬೇಕಾದದ್ದೇನೆಂದರೆ: ‘ಸಾರ್ವಭೌಮ ಯೆಹೋವ ದೇವರು ಇಂತೆನ್ನುತ್ತಾರೆ: ಇತರ ಜನಾಂಗಗಳ ಅವಮಾನವನ್ನು ಹೊತ್ತದ್ದರಿಂದ ನಾನು ರೋಷದಿಂದಲೂ ರೌದ್ರದಿಂದಲೂ ಮಾತನಾಡಿದ್ದೇನೆ.</verse>
				<verse number="7">ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನನ್ನ ಕೈಯೆತ್ತಿ ಪ್ರಮಾಣ ಮಾಡಿದ್ದೇನೆ, ನಿಶ್ಚಯವಾಗಿ ನಿನ್ನ ಮೇಲಿರುವ ಆ ಜನಾಂಗಗಳು ತಮ್ಮ ನಿಂದೆಯನ್ನು ಹೊರುವರು.</verse>
				<verse number="8">“ ‘ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹರಡಿಸಿ ನನ್ನ ಜನರಾದ ಇಸ್ರಾಯೇಲರಿಗೆ ಫಲಕೊಡುವಿರಿ. ಏಕೆಂದರೆ ಅವರ ಬರುವಿಕೆಯು ಸಮೀಪವಾಗಿದೆ.</verse>
				<verse number="9">ನಾನು ನಿಮ್ಮವನಾಗಿದ್ದೇನೆ ನಾನು ನಿಮ್ಮ ಕಡೆಗೆ ತಿರುಗಿಕೊಳ್ಳುತ್ತೇನೆ ಮತ್ತು ನಿಮ್ಮಲ್ಲಿ ಉಳುಮೆ ಮಾಡಿ ಬಿತ್ತಲಾಗುತ್ತದೆ.</verse>
				<verse number="10">ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದವರನ್ನೂ ಎಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿಸುತ್ತೇನೆ. ಪಟ್ಟಣಗಳು ಜನಭರಿತವಾಗುವುವು. ಹಾಳು ನಿವೇಶನಗಳಲ್ಲಿ ಕಟ್ಟಡಗಳು ಏಳುವುವು.</verse>
				<verse number="11">ನಾನು ನಿಮ್ಮ ಮೇಲೆ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡುವೆನು. ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವುವು. ನಾನು ನಿಮ್ಮನ್ನು ಮೊದಲಿನ ಸ್ಥಿತಿಗಿಂತ ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.</verse>
				<verse number="12">ನನ್ನ ಜನರಾದ ಇಸ್ರಾಯೇಲ್ಯರನ್ನು ನಿಮ್ಮಲ್ಲಿ ವಾಸಿಸುವಂತೆ ಮಾಡುವೆನು. ಅವರು ನಿನ್ನನ್ನು ಸ್ವಾಧೀನಪಡಿಸಿಕೊಳ್ಳುವರು ಮತ್ತು ನೀವು ಅವರ ಸೊತ್ತಾಗಿರುವಿರಿ; ನೀವು ಎಂದಿಗೂ ಅವರ ಮಕ್ಕಳಿಂದ ವಂಚಿತರಾಗುವುದಿಲ್ಲ.</verse>
				<verse number="13">“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀನು ಮನುಷ್ಯರನ್ನು ನುಂಗುವಂಥ ದೇಶ ಮತ್ತು ನಿನ್ನ ಜನಗಳನ್ನು ಮಕ್ಕಳಿಲ್ಲದಂಥ ಜನಾಂಗಗಳನ್ನಾಗಿ ಮಾಡುವಂಥದ್ದು ಆಗಿರುವೆ,” ಎಂದು ಅವರು ನಿನಗೆ ಹೇಳುವರು.</verse>
				<verse number="14">ಆದ್ದರಿಂದ ಇನ್ನು ಮೇಲೆ ನೀನು ಮನುಷ್ಯರನ್ನು ನುಂಗುವುದಿಲ್ಲ. ಇನ್ನು ಮೇಲೆ ನಿನ್ನ ಜನಾಂಗದವರನ್ನೂ ಮಕ್ಕಳಿಲ್ಲದವರನ್ನಾಗಿ ಮಾಡುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="15">ಅಲ್ಲದೆ ಇನ್ನು ಮೇಲೆ ನೀನು ಇತರ ಜನಾಂಗಗಳ ನಿಂದೆಯನ್ನು ಕೇಳಿಸಿಕೊಳ್ಳದಂತೆ ನಾನು ಮಾಡುವೆನು; ನೀನು ಇನ್ನು ಮೇಲೆ ಜನಾಂಗಗಳಿಂದ ಅವಮಾನ ಅನುಭವಿಸುವುದಿಲ್ಲ. ನೀನು ನಿನ್ನ ಜನಾಂಗವನ್ನು ಇನ್ನೆಂದಿಗೂ ಬೀಳಿಸುವುದಿಲ್ಲ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’ ”</verse>
				<verse number="16">ಯೆಹೋವ ದೇವರ ವಾಕ್ಯವು ನನಗೆ ಬಂದಿತು,</verse>
				<verse number="17">“ಮನುಷ್ಯಪುತ್ರನೇ, ಯಾವಾಗ ಇಸ್ರಾಯೇಲರ ಮನೆತನದವರು ಸ್ವಂತ ದೇಶದಲ್ಲಿ ವಾಸಿಸಿದರೋ, ಆಗ ಅವರು ಅದನ್ನು ತಮ್ಮ ಸ್ವಂತ ಮಾರ್ಗಗಳಿಂದಲೂ ದುಷ್ಕಾರ್ಯಗಳಿಂದಲೂ ಅಶುದ್ಧಗೊಳಿಸಿದರು. ಅವರ ಆ ದುಷ್ಕಾರ್ಯಗಳು ನನ್ನ ಮುಂದೆ ಮುಟ್ಟಾಗಿರುವವಳ ಅಶುದ್ಧತ್ವದ ಹಾಗಿತ್ತು.</verse>
				<verse number="18">ಆದ್ದರಿಂದ ಅವರು ದೇಶದಲ್ಲಿ ಚೆಲ್ಲಿದ ರಕ್ತದ ನಿಮಿತ್ತವಾಗಿಯೂ ಅವರು ಅದನ್ನು ಅಶುದ್ಧಪಡಿಸಿದ ಅವರ ವಿಗ್ರಹಗಳ ನಿಮಿತ್ತವಾಗಿಯೂ ನನ್ನ ರೋಷವನ್ನು ಅವರ ಮೇಲೆ ಸುರಿಸಿದೆನು.</verse>
				<verse number="19">ನಾನು ಅವರನ್ನು ಜನಾಂಗಗಳಲ್ಲಿ ಚದರಿಸಿದೆನು. ಅವರು ಆ ದೇಶಗಳಲ್ಲಿ ಚದರಿಹೋದರು. ಅವರ ದುರ್ಮಾರ್ಗ ದುರಾಚಾರಗಳಿಗೆ ಅನುಸಾರವಾಗಿ ಅವರನ್ನು ನ್ಯಾಯತೀರಿಸಿದೆನು.</verse>
				<verse number="20">ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ ಇವರೇ, ‘ಯೆಹೋವ ದೇವರ ಜನರು ಮತ್ತು ಇವರು ಆತನ ದೇಶದಿಂದ ಹೊರಟು ಹೋದರು,’ ಎಂದು ಅವರಿಗೆ ಹೇಳಿ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರ ಮಾಡಿದರು.</verse>
				<verse number="21">ಆದರೆ ಇಸ್ರಾಯೇಲಿನ ಮನೆತನದವರು ತಾವು ಹೋದ ಜನಾಂಗಗಳಲ್ಲಿ ಅಪವಿತ್ರಮಾಡಿದ ನನ್ನ ಪರಿಶುದ್ಧವಾದ ಹೆಸರನ್ನು ಕುರಿತು ಮನಮರುಗಿದೆನು.</verse>
				<verse number="22">“ಆದ್ದರಿಂದ ನೀನು ಇಸ್ರಾಯೇಲರ ಮನೆತನದವರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ; ಇಸ್ರಾಯೇಲಿನ ಮನೆತನದವರೇ, ನಾನು ಇದನ್ನು ನಿಮಗಾಗಿ ಮಾಡುತ್ತಿಲ್ಲ. ಆದರೆ ನೀವು ಇತರ ಜನಾಂಗಗಳ ನಡುವೆ ಅಪವಿತ್ರಪಡಿಸಿದ ನನ್ನ ಪರಿಶುದ್ಧ ನಾಮಕ್ಕಾಗಿ ಮಾಡುತ್ತೇನೆ.</verse>
				<verse number="23">ನೀನು ನನ್ನ ಮಹತ್ವದ ನಾಮವನ್ನು ಅಪವಿತ್ರತೆಗೆ ಗುರಿಮಾಡಿದ ಇತರ ಜನಾಂಗಗಳಲ್ಲಿ ನನ್ನ ಪವಿತ್ರ ನಾಮವನ್ನು ತೋರಿಸುವೆನು. ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮೂಲಕವಾಗಿ ನನ್ನನ್ನು ಪವಿತ್ರನೆಂದು ತೋರಿಸುವಾಗ ಅವರು ನಾನು ಯೆಹೋವ ದೇವರೆಂಬುದನ್ನು ತಿಳಿದುಕೊಳ್ಳುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="24">“ ‘ನಾನು ನಿಮ್ಮನ್ನು ಇತರ ಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.</verse>
				<verse number="25">ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.</verse>
				<verse number="26">ನಿಮಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮವನ್ನು ನಿಮ್ಮೊಳಗೆ ಇಡುವೆನು. ನಿಮ್ಮೊಳಗಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ.</verse>
				<verse number="27">ನನ್ನ ಆತ್ಮವನ್ನು ನಿಮ್ಮೊಳಗೆ ಇಡುವೆನು. ನೀವು ನನ್ನ ನಿಯಮಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಜಾಗರೂಕತೆಯಿಂದ ಅನುಸರಿಸಿ ನಡೆಯುವಿರಿ.</verse>
				<verse number="28">ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿಸುವಿರಿ; ನೀವು ನನ್ನ ಜನರಾಗಿರುವಿರಿ. ನಾನು ನಿಮ್ಮ ದೇವರಾಗಿರುವೆನು.</verse>
				<verse number="29">ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು. ಬೆಳೆ ಬೆಳೆಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವುದಿಲ್ಲ.</verse>
				<verse number="30">ಜನಾಂಗಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನೂ ಹೆಚ್ಚಿಸುವೆನು.</verse>
				<verse number="31">ಆಮೇಲೆ ನೀವು ನಿಮ್ಮ ನಿಮ್ಮ ದುರ್ಮಾರ್ಗಗಳನ್ನೂ ದುರಾಚಾರಗಳನ್ನೂ ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.</verse>
				<verse number="32">ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾರ್ಗಗಳಿಗೆ ನಾಚಿಕೆಪಟ್ಟು ಲಜ್ಜೆಹೊಂದಿರಿ.</verse>
				<verse number="33">“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ನಿಮ್ಮ ಎಲ್ಲಾ ಅಕ್ರಮಗಳಿಂದ ನಿಮ್ಮನ್ನು ಶುದ್ಧಮಾಡುವ ಆ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು. ಹಾಳಾಗಿರುವ ಸ್ಥಳಗಳಲ್ಲಿಯೂ ಕಟ್ಟಡಗಳು ಪುನಃ ಏಳುವುವು.</verse>
				<verse number="34">ದೇಶವು ಅಲ್ಲಿ ಹಾದುಹೋಗುವ ಜನರೆಲ್ಲರ ಮುಂದೆ ಹಾಳುಬಿದ್ದ ಹಾಗೆ ಕಾಣದೆ ಉಳುಮೆಗೊಂಡಿರುವುದು.</verse>
				<verse number="35">“ಹಾಳಾಗಿದ್ದ ಈ ದೇಶವು ಏದೆನಿನ ಉದ್ಯಾನವನದ ಹಾಗಾಯಿತೆಂದು ಮತ್ತು ಹಾಳಾಗಿ ಬಿದ್ದುಹೋಗಿ ಬೀಡಾಗಿ ನಶಿಸಿಹೋಗಿರುವ ಪಟ್ಟಣಗಳು ನಾಡಾಗಿ ಕೋಟೆಗಳಿಂದಲೂ ನಿವಾಸಿಗಳಿಂದಲೂ ತುಂಬಿವೆ,” ಎಂದು ಹೇಳುವರು.</verse>
				<verse number="36">ಯೆಹೋವ ದೇವರಾದ ನಾನೇ ಬಿದ್ದುಹೋದದ್ದನ್ನು ಕಟ್ಟಿ, ಹಾಳಾದದ್ದನ್ನು ಬೆಳೆಯಿಸಿದ್ದೇನೆ ಎಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಯೆಹೋವ ದೇವರಾದ ನಾನೇ ಇದನ್ನು ಹೇಳಿದ್ದೇನೆ ಮತ್ತು ನಾನೇ ಇದನ್ನು ಮಾಡುತ್ತೇನೆ.’</verse>
				<verse number="37">“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಇನ್ನೊಂದು ವಿಷಯದಲ್ಲಿ, ಇಸ್ರಾಯೇಲರ ಮತ್ತೊಂದು ಕೋರಿಕೆಯನ್ನು ಆಲಿಸಿ ನೆರವೇರಿಸುವೆನು. ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.</verse>
				<verse number="38">ಮೀಸಲಾದ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು. ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವುವು. ನಾನೇ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.”</verse>
			</chapter>
			<chapter number="37">
				<verse number="1">ಯೆಹೋವ ದೇವರ ಕೈ ನನ್ನ ಮೇಲೆ ಇತ್ತು; ಅದು ಆತನ ಆತ್ಮದ ಮೂಲಕ ನನ್ನನ್ನು ಹೊರಗೆ ತಂದು ಪೂರ್ತಿಯಾಗಿ ಎಲುಬುಗಳು ತುಂಬಿರುವ ಕಣಿವೆಯಲ್ಲಿ ಇಳಿಸಿತು.</verse>
				<verse number="2">ನಾನು ಎಲುಬುಗಳ ಮಧ್ಯೆ ಆ ಕಣಿವೆಯನ್ನು ಬಳಸಿಕೊಂಡು ಬರುವಂತೆ ಮಾಡಿದನು. ತೆರೆದಿರುವ ಆ ಕಣಿವೆಯಲ್ಲಿ ಒಣಗಿ ಹೋದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.</verse>
				<verse number="3">ಆತನು ನನಗೆ, “ನರಪುತ್ರನೇ, ಈ ಎಲುಬುಗಳು ಜೀವಿಸುವಂಥವೇ?” ಎಂದಾಗ, ನಾನು ಉತ್ತರವಾಗಿ, “ಸಾರ್ವಭೌಮ ಯೆಹೋವ ದೇವರೇ, ನೀವೇ ತಿಳಿದಿರುವಿರಿ,” ಎಂದೆನು.</verse>
				<verse number="4">ಅವರು ನನಗೆ ಹೇಳಿದ್ದೇನೆಂದರೆ, “ಈ ಎಲುಬುಗಳ ಮೇಲೆ ಪ್ರವಾದಿಸಿ, ಅವುಗಳಿಗೆ ಹೇಳು: ‘ಒಣಗಿದ ಎಲುಬುಗಳೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ,</verse>
				<verse number="5">ಸಾರ್ವಭೌಮ ಯೆಹೋವ ದೇವರು ಈ ಎಲುಬುಗಳಿಗೆ ಹೀಗೆ ಹೇಳುತ್ತಾರೆ: ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ. ನೀವು ಬದುಕುವಿರಿ;</verse>
				<verse number="6">ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ತಂದು ಮತ್ತು ಚರ್ಮದಿಂದ ಮುಚ್ಚಿ ನಿಮ್ಮೊಳಗೆ ಉಸಿರನ್ನು ಕೊಟ್ಟು ಬದುಕಿಸುತ್ತೇನೆ ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.’ ”</verse>
				<verse number="7">ಅದರಂತೆ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು. ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು. ಅದು ಕದಲುತ್ತಿತ್ತು, ಎಲುಬುಗಳೆಲ್ಲಾ ಒಂದುಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು.</verse>
				<verse number="8">ನಾನು ನೋಡಿದಾಗ, ನರಗಳು ಮತ್ತು ಮಾಂಸವು ಅವುಗಳ ಮೇಲೆ ಬಂದವು. ಅವುಗಳ ಮೇಲೆ ಚರ್ಮವು ಮುಚ್ಚಿಕೊಂಡಿತು. ಆದರೆ ಅವುಗಳಿಗೆ ಉಸಿರೇ ಇರಲಿಲ್ಲ.</verse>
				<verse number="9">ಆಮೇಲೆ ಆತನು ನನಗೆ ಹೇಳಿದ್ದೇನೆಂದರೆ, “ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯಪುತ್ರನೇ, ಆ ಉಸಿರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತಶರೀರಗಳು ಬದುಕುವಂತೆ ಅದರ ಮೇಲೆ ಊದು.’ ”</verse>
				<verse number="10">ನಾನು ಆತನ ಆಜ್ಞೆಯ ಹಾಗೆಯೇ ಪ್ರವಾದಿಸಿದೆನು, ಅವುಗಳಲ್ಲಿ ಉಸಿರು ಬಂತು. ಅವುಗಳಲ್ಲಿ ಪಾದದ ಮೇಲೆ ಅವುಗಳು ನಿಂತವು, ಅತ್ಯಂತ ಮಹಾಸೈನ್ಯವಾದವು.</verse>
				<verse number="11">ಆಮೇಲೆ ಆತನು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ. ಇಗೋ, ‘ನಮ್ಮ ಎಲುಬುಗಳು ಒಣಗಿಹೋದವು. ನಮ್ಮ ನಿರೀಕ್ಷೆಯು ಸಹ ಕಳೆದು ಹೋಗಿದೆ. ಸಂಪೂರ್ಣವಾಗಿ ನಾಶವಾದೆವು ಎಂದು ಅವರು ಹೇಳುವರು.’</verse>
				<verse number="12">ಆದ್ದರಿಂದ ನೀನು ಪ್ರವಾದಿಸಿ ಅವರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ತರುವೆನು.</verse>
				<verse number="13">ನನ್ನ ಜನರೇ, ಯಾವಾಗ ನಾನು ನಿಮ್ಮ ಸಮಾಧಿಗಳನ್ನು ತೆರೆದು ಹೊರಗೆ ಬರಮಾಡುವೆನೋ ಆಗ ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.</verse>
				<verse number="14">ನನ್ನ ಆತ್ಮವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಗ ಯೆಹೋವ ದೇವರಾದ ನಾನೇ ಇದನ್ನು ನುಡಿದು ನೆರವೇರಿಸಿದ್ದೇನೆ ಎಂದು ನೀವು ತಿಳಿಯುವಿರಿ, ಎಂದು ಯೆಹೋವ ದೇವರು ಹೇಳುತ್ತಾರೆ.’ ”</verse>
				<verse number="15">ಯೆಹೋವ ದೇವರ ವಾಕ್ಯವು ನನಗೆ ಬಂದಿತು,</verse>
				<verse number="16">“ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ, ‘ಯೆಹೂದನದು ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು,’ ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ, ‘ಎಫ್ರಾಯೀಮಿನ ಕೋಲು ಯೋಸೇಫನಿಗೂ ಅವನ ಜೊತೆಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು,’ ಎಂದು ಬರೆದಿಡು.</verse>
				<verse number="17">ಆ ಎರಡನ್ನು ಒಂದೇ ಕೋಲಾಗುವ ಹಾಗೆ ಜೋಡಿಸು. ಅವು ಒಂದಾಗಿ ನಿನ್ನ ಕೈಯಲ್ಲಿರುವುವು.</verse>
				<verse number="18">“ ‘ಇದರ ಅರ್ಥವೇನೆಂದು ನೀನು ನಮಗೆ ಹೇಳುವುದಿಲ್ಲವೋ?’ ಎಂದು ನಿನ್ನ ದೇಶದ ಜನರು ನಿನ್ನನ್ನು ಪ್ರಶ್ನಿಸುವಾಗ,</verse>
				<verse number="19">ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಎಫ್ರಾಯೀಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು,’ ಎಂದು ಹೇಳು.</verse>
				<verse number="20">ನೀನು ಬರೆದ ಆ ಕೋಲುಗಳು ಅವರ ಕಣ್ಣುಗಳ ಮುಂದೆ ನಿನ್ನ ಕೈಯಲ್ಲಿ ಹಿಡಿದು ಅವರಿಗೆ ಹೇಳು:</verse>
				<verse number="21">‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ಇಸ್ರಾಯೇಲರನ್ನು ಅವರು ಹೋಗಿರುವ ಕಡೆಯಿಂದ ಒಂದುಗೂಡಿಸಿ ಅವರ ಸ್ವಂತ ದೇಶಕ್ಕೆ ತರುವೆನು.</verse>
				<verse number="22">ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ. ಅವರೆಲ್ಲರಿಗೂ ಒಬ್ಬನೇ ಅರಸನಾಗಿರುವನು. ಇನ್ನು ಮೇಲೆ ಅವರು ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ.</verse>
				<verse number="23">ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ತಮ್ಮ ಅಸಹ್ಯ ವಸ್ತುಗಳಿಂದಲೂ ತಮ್ಮ ಅಕ್ರಮಗಳಿಂದಲೂ ಅಶುದ್ಧವಾಗುವುದಿಲ್ಲ. ಅವರ ಎಲ್ಲಾ ಪಾಪದ ಹಿಂಜಾರುವಿಕೆಯಿಂದಲೂ ನಾನು ಅವರನ್ನು ರಕ್ಷಿಸಿ, ಅವರನ್ನು ಶುದ್ಧಮಾಡುವೆನು. ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.</verse>
				<verse number="24">“ ‘ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು. ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು; ನನ್ನ ನ್ಯಾಯಗಳನ್ನು ಅನುಸರಿಸಿ, ನನ್ನ ನಿಯಮಗಳನ್ನು ಪಾಲಿಸುವಂತೆ ಮಾಡುವೆನು.</verse>
				<verse number="25">ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ಪಿತೃಗಳು ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮೊಮ್ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ರಾಜಕುಮಾರನಾಗಿರುವನು.</verse>
				<verse number="26">ಇದಾದ ಮೇಲೆ ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿರುವುದು. ನಾನು ಅವರನ್ನು ನೆಲೆಗೊಳಿಸಿ ವೃದ್ಧಿಗೊಳಿಸುವೆನು. ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.</verse>
				<verse number="27">ನನ್ನ ಗುಡಾರವು ಸಹ ಅವರೊಂದಿಗಿರುವುದು. ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.</verse>
				<verse number="28">ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಯೆಹೋವ ದೇವರಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದೆನೆಂದು ಎಲ್ಲಾ ದೇಶದ ಜನಾಂಗಗಳು ಸಹ ತಿಳಿದುಕೊಳ್ಳುವರು.’ ”</verse>
			</chapter>
			<chapter number="38">
				<verse number="1">ಯೆಹೋವ ದೇವರ ವಾಕ್ಯವು ನನಗೆ ಬಂದಿತು,</verse>
				<verse number="2">“ಓ ಮನುಷ್ಯಪುತ್ರನೇ, ರೋಷ್, ಮೆಷೆಕ್ ಮತ್ತು ತೂಬಲ್‌ನ ಮುಖ್ಯ ರಾಜಕುಮಾರನಾದ ಮಾಗೋಗ್ ದೇಶದ ಗೋಗನ ಕಡೆಗೆ ನಿನ್ನ ಮುಖವನ್ನು ತಿರುಗಿಸು; ಮತ್ತು ಅವನ ವಿರುದ್ಧವಾಗಿ ಪ್ರವಾದಿಸು.</verse>
				<verse number="3">‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ರೋಷ್, ಮೆಷೆಕ್, ತೂಬಲಿಗೆ ಮುಖ್ಯ ರಾಜಕುಮಾರನಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ.</verse>
				<verse number="4">ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕುವೆನು. ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಮತ್ತು ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧಗಳನ್ನು ತೊಟ್ಟಿರುವರು, ಇವರೊಂದಿಗೆ ಚಿಕ್ಕ ಮತ್ತು ದೊಡ್ಡ ಗುರಾಣಿಗಳುಳ್ಳ ಮಹಾಸಮೂಹವನ್ನು ತರುವೆನು. ಇವರೆಲ್ಲರೂ ಖಡ್ಗಗಳನ್ನು ಹಿಡಿದಿರುವರು.</verse>
				<verse number="5">ಅವರೊಂದಿಗೆ ಪಾರಸಿಯರೂ ಕೂಷ್ಯರೂ ಮತ್ತು ಪೂಟ್ಯರೂ ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು.</verse>
				<verse number="6">ಗೋಮೆರ್ ಮತ್ತು ಅದರ ಎಲ್ಲಾ ದಳಗಳನ್ನೂ, ಉತ್ತರ ದಿಕ್ಕಿನ ತೋಗರ್ಮದವರನ್ನೂ ಮತ್ತು ಅದರ ಎಲ್ಲಾ ದಳಗಳನ್ನೂ, ಹೀಗೆ ನಿನ್ನ ಸಂಗಡವಿರುವ ಅನೇಕ ಜನರನ್ನೂ ನಿನ್ನೊಂದಿಗೆ ಬರಮಾಡುವೆನು.</verse>
				<verse number="7">“ ‘ನೀನು ಸಿದ್ಧನಾಗಿ ನಿನ್ನ ಸಂಗಡ ಕೂಡಿಬಂದಿರುವ ನಿನ್ನ ಎಲ್ಲಾ ಕೂಟಗಳನ್ನು ಸಿದ್ಧಮಾಡಿಕೊಂಡು ನೀನು ಅವರ ಅಧಿಕಾರವನ್ನು ತೆಗೆದುಕೊ.</verse>
				<verse number="8">ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಕರೆಯುವೆನು; ನೀನು ಯುದ್ಧದಿಂದ ಉಳಿದುಕೊಂಡ ದೇಶಕ್ಕೂ, ಯಾವಾಗಲೂ ಹಾಳಾಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ, ಜನಾಂಗಗಳಿಂದ ಒಟ್ಟುಗೂಡಿ ಭದ್ರವಾಗಿ ವಾಸಿಸುವವರ ವಿರೋಧವಾಗಿ ವರ್ಷಗಳ ಅಂತ್ಯದಲ್ಲಿ ಬರುವೆ.</verse>
				<verse number="9">ನೀನು ಮೇಲೇರಿ ಬಿರುಗಾಳಿಯಂತೆ ಬರುವೆ. ನೀನೂ ನಿನ್ನ ಎಲ್ಲಾ ದಂಡುಗಳೂ ಅನೇಕ ಜನರಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ.</verse>
				<verse number="10">“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಆ ದಿನದಲ್ಲಿ ನಿನ್ನ ಮನಸ್ಸಿಗೆ ಕೆಲವು ಆಲೋಚನೆಗಳು ಬರುವುವು ಮತ್ತು ನೀನು ಒಂದು ಕುತಂತ್ರವನ್ನು ಮಾಡುವೆ.</verse>
				<verse number="11">ನೀವು ಹೇಳುವಿರಿ, “ಗೋಡೆಯಿಲ್ಲದ ಹಳ್ಳಿಗಳಿಲ್ಲದ ದೇಶದ ಮೇಲೆ ನಾನು ಆಕ್ರಮಣ ಮಾಡುತ್ತೇನೆ. ಪೌಳಿಗೋಡೆಗಳಿಲ್ಲದೆ ಇಲ್ಲವೆ ಬಾಗಿಲುಗಳು ಅಗುಳಿಗಳು ಇಲ್ಲದೆ ಅವರು ಶಾಂತಿಯುತ ಮತ್ತು ನಿರ್ಭಯವಾಗಿ ವಾಸಿಸುವವರ ಮೇಲೆ ದಾಳಿಮಾಡುತ್ತೇನೆ.</verse>
				<verse number="12">ನಾನು ಸುಲಿಗೆಯನ್ನು ಮತ್ತು ಕೊಳ್ಳೆಯನ್ನು ತೆಗೆದುಕೊಳ್ಳುವೆನು. ಹೀಗೆ ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳನ್ನು ಎದುರಿಸುವೆನು. ಜನಾಂಗಗಳಿಂದ ಒಟ್ಟುಗೂಡಿ, ಪಶುಗಳೂ ಸಂಪತ್ತೂ ಉಳ್ಳಂಥ ಮತ್ತು ಭೂಮಿಯ ಮಧ್ಯದಲ್ಲಿ ವಾಸಿಸುವವರ ಮೇಲೆಯೂ ಕೈಹಾಕುವೆನು,” ಎಂದು ಹೇಳುವೆ.</verse>
				<verse number="13">ಶೆಬ, ದೆದಾನ್ ಮತ್ತು ತಾರ್ಷೀಷಿನ ವರ್ತಕರು, ಅವಳ ಎಲ್ಲಾ ಹಳ್ಳಿಗಳೊಂದಿಗೆ ಅಲ್ಲಿ ನಿನಗೆ, “ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದೆಯಾ? ಕೊಳ್ಳೆ ಹೊಡೆಯುವುದಕ್ಕಾಗಿಯೇ ನಿನ್ನ ತಂಡವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ಪಶುಗಳನ್ನೂ ಸಂಪತ್ತನ್ನೂ ತೆಗೆದುಕೊಂಡು ಮಹಾ ಸುಲಿಗೆ ತೆಗೆದುಕೊಳ್ಳಬೇಕೆಂದೋ?” ಎನ್ನುವರು.’</verse>
				<verse number="14">“ಆದ್ದರಿಂದ ಮನುಷ್ಯಪುತ್ರನೇ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಗೋಗಿಗೆ ಪ್ರವಾದಿಸಿ ಹೇಳು, ನನ್ನ ಜನರಾದ ಇಸ್ರಾಯೇಲರು ಸುಖವಾಗಿ ವಾಸಿಸುವರೋ ಆ ದಿನದಲ್ಲಿ ಅದು ನಿನಗೆ ತಿಳಿಯುವುದಿಲ್ಲವೋ</verse>
				<verse number="15">ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವೆ. ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದವರಾಗಿ ಬಲವಾದ ಸೈನ್ಯವಾಗಿಯೂ ಮಹಾ ದಂಡಾಗಿಯೂ ಬರುವೆ.</verse>
				<verse number="16">ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲರಿಗೆ ವಿರೋಧವಾಗಿ ಅವರ ಮೇಲೆ ಬರುವೆ. ಇದು ನಡೆಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಇತರ ಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ವಿರೋಧವಾಗಿ ಬರಮಾಡುವೆನು.</verse>
				<verse number="17">“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರಮಾಡುತ್ತೇನೆಂದು ಆ ದಿನಗಳಲ್ಲಿ ಅನೇಕ ವರ್ಷಗಳಿಗೆ ಮುಂಚೆ ಪ್ರವಾದಿಸಿದೆಯಲ್ಲವೇ?</verse>
				<verse number="18">ಆ ದಿನದಲ್ಲಿ ಗೋಗನು ಇಸ್ರಾಯೇಲ್ ದೇಶಕ್ಕೆ ವಿರೋಧವಾಗಿ ಬರುವಾಗ, ನಾನು ರೋಷದಿಂದ ಬುಸುಗುಟ್ಟುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="19">ಏಕೆಂದರೆ ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನದಂದು ಇಸ್ರಾಯೇಲ್ ದೇಶದಲ್ಲಿ ಮಹಾಕಂಪನ ಉಂಟಾಗುವುದು.</verse>
				<verse number="20">ಆಗ ಸಮುದ್ರದ ಮೀನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವುವು; ಪರ್ವತಗಳು ಉರುಳಿಹೋಗುವುವು. ಝರಿಗಳು ಕವಚಿಕೊಳ್ಳುತ್ತಾ, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವುದು.</verse>
				<verse number="21">ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಖಡ್ಗವನ್ನು ಕರೆಯುವೆನೆಂದೂ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಪ್ರತಿಯೊಬ್ಬ ಮನುಷ್ಯನ ಖಡ್ಗವೂ ಅವನ ಸಹೋದರನಿಗೆ ವಿರೋಧವಾಗಿರುವುದು.</verse>
				<verse number="22">ನಾನು ಅವನೊಂದಿಗೆ ವ್ಯಾಜ್ಯಮಾಡುತ್ತಾ ಅವನನ್ನು ವ್ಯಾಧಿಗೂ ಸಾವಿಗೂ ಗುರಿಮಾಡುವೆನು. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.</verse>
				<verse number="23">ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹು ಜನಾಂಗಗಳು ನಾನೇ ಯೆಹೋವ ದೇವರೆಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.’</verse>
			</chapter>
			<chapter number="39">
				<verse number="1">“ಮನುಷ್ಯಪುತ್ರನೇ, ನೀನು, ಗೋಗನಿಗೆ ವಿರುದ್ಧವಾಗಿ ಪ್ರವಾದಿಸಿ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆಂದು ಹೇಳು, ರೋಷ್, ಮೆಷೆಕ್ ಮತ್ತು ತೂಬಲಿಗೆ ಮುಖ್ಯ ಪ್ರಭುವಾದ ಓ ಗೋಗನೇ, ನಿನಗೆ ನಾನು ವಿರೋಧವಾಗಿದ್ದೇನೆ.</verse>
				<verse number="2">ನಾನು ನಿನಗೆ ವಿರುದ್ಧವಾಗಿ ನಿನ್ನನ್ನು ತಿರುಗಿಸಿ ಮುಂದರಿಸಿ ಉತ್ತರ ದಿಕ್ಕಿನ ಕಟ್ಟಕಡೆಯಿಂದ ಬರಮಾಡಿ ಇಸ್ರಾಯೇಲಿನ ಪರ್ವತಗಳ ಮೇಲೆ ನುಗ್ಗಿಸಿ,</verse>
				<verse number="3">ನಾನು ನಿನ್ನ ಎಡಗೈಯಿಂದ ನಿನ್ನ ಬಿಲ್ಲನ್ನು ಹೊಡೆಯುವೆನು ಮತ್ತು ನಿನ್ನ ಬಲಗೈಯಿಂದ ನಿನ್ನ ಬಾಣಗಳನ್ನು ಉದುರಿ ಬೀಳುವಂತೆ ಮಾಡುವೆನು.</verse>
				<verse number="4">ನೀನೂ ನಿನ್ನ ಎಲ್ಲಾ ದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ. ಮಾಂಸತಿನ್ನುವ ಎಲ್ಲ ತರಹದ ಪಕ್ಷಿಗಳಿಗೂ ಮತ್ತು ಕಾಡುಮೃಗಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.</verse>
				<verse number="5">ನೀನು ತೆರೆದ ಬಯಲಿನಲ್ಲಿ ಬೀಳುವೆ, ಏಕೆಂದರೆ ನಾನೇ ಇದನ್ನು ಹೇಳಿರುವೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="6">ನಾನು ಮಾಗೋಗ್ ಮತ್ತು ಅವರೊಂದಿಗೆ ದ್ವೀಪಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ, ಅವರು ನಾನೇ ಯೆಹೋವ ದೇವರೆಂದು ತಿಳಿಯುವರು.</verse>
				<verse number="7">“ ‘ಹೀಗೆ ನನ್ನ ಜನರಾದ ಇಸ್ರಾಯೇಲ್ ಮಧ್ಯದಲ್ಲಿ ನಾನು ನನ್ನ ಪರಿಶುದ್ಧವಾದ ಹೆಸರನ್ನು ವ್ಯಕ್ತಗೊಳಿಸುವೆನು. ಅವರು ಇನ್ನೆಂದಿಗೂ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರವಾಗದಂತೆ ಮಾಡುವೆನು. ಇಸ್ರಾಯೇಲಿನಲ್ಲಿ ಪರಿಶುದ್ಧನಾದ ಯೆಹೋವ ದೇವರು ನಾನೇ ಎಂದು ಇತರ ದೇಶದವರಿಗೆ ಗೊತ್ತಾಗುವುದು.</verse>
				<verse number="8">ಇದು ಬಂದಿತು, ಇದು ನೆರವೇರಿತು. ನಾನು ಮುಂತಿಳಿಸಿದ ದಿನವು ಇದೇ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="9">“ ‘ಇಸ್ರಾಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು, ಶತ್ರುವಿನ ಆಯುಧಗಳಿಗೆ ಬೆಂಕಿಯಿಕ್ಕಿ ಸುಟ್ಟುಬಿಡುವರು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು.</verse>
				<verse number="10">ಅದಕ್ಕಾಗಿ ಅವರು ಬಯಲಿನಿಂದ ಮರಗಳನ್ನು ತೆಗೆದುಕೊಳ್ಳುವುದಿಲ್ಲ ಅಥವಾ ಅರಣ್ಯಗಳಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವುದೂ ಇಲ್ಲ, ಅವರು ಆಯುಧಗಳನ್ನು ಬೆಂಕಿಗೆ ಸೌದೆಯಾಗಿ ಉಪಯೋಗಿಸುವರು. ಅವರು ಸೂರೆಯಾದವುಗಳನ್ನು ಸೂರೆ ಮಾಡುವರು ಮತ್ತು ಕೊಳ್ಳೆ ಹೊಡೆದವರನ್ನು ತಾವು ಕೊಳ್ಳೆಹೊಡೆಯುವರು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="11">“ ‘ಆ ದಿನದಲ್ಲಿ ನಾನು ಗೋಗನಿಗೆ ಇಸ್ರಾಯೇಲಿನ ಸಮಾಧಿಗಳಲ್ಲಿ ಸ್ಥಳವನ್ನು ಕೊಡುತ್ತೇನೆ. ಸಮುದ್ರದ ಪೂರ್ವದಲ್ಲಿರುವ ಪ್ರಯಾಣಿಕರು ಹಾದುಹೋಗುವ ಕಣಿವೆಯೇ, ಆಗ ಅದು ಹಾದು ಹೋಗುವವರನ್ನು ನಿಲ್ಲಿಸುವುದು. ಅಲ್ಲಿ ಗೋಗನನ್ನೂ ಅವನ ಎಲ್ಲಾ ದಳವನ್ನು ಸಮಾಧಿಮಾಡುವರು. ಆ ಕಣಿವೆಯನ್ನು ಹಾಮೋನ್ ಗೋಗ್ ಎಂದು ಕರೆಯುವರು.</verse>
				<verse number="12">“ ‘ಇಸ್ರಾಯೇಲನ ಮನೆತನದವರು ದೇಶವನ್ನು ಶುದ್ಧಮಾಡುವ ಹಾಗೆ ಅವರನ್ನು ಏಳು ತಿಂಗಳುಗಳವರೆಗೂ ಸಮಾಧಿಮಾಡುವರು.</verse>
				<verse number="13">ದೇಶದ ಎಲ್ಲಾ ಜನರು ಅವರನ್ನು ಹೂಳಿಡುವರು. ನಾನು ಮಹಿಮೆಯನ್ನು ಹೊಂದುವ ದಿನವು ಅವರಿಗೆ ಸ್ಮರಣ ದಿನವಾಗಿರುವುದು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="14">ದೇಶವನ್ನು ಶುದ್ಧೀಕರಿಸುವ ಹಾಗೆ ಅದರ ಮೇಲೆ ಮಿಕ್ಕವರನ್ನು ಹೂಳಿಡುವುದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನಿರಂತರವಾಗಿ ನೇಮಿಸುವರು. “ ‘ಮತ್ತು ಇವರು ಏಳು ತಿಂಗಳುಗಳಾದ ಮೇಲೆ ಹುಡುಕುವರು.</verse>
				<verse number="15">ಪ್ರಯಾಣಿಕರು ಆ ದೇಶದಲ್ಲಿ ಹಾದುಹೋಗುತ್ತಿರುವಾಗ ಯಾವುದಾದರೊಂದು ಮನುಷ್ಯನ ಎಲುಬನ್ನು ಕಂಡರೆ ಅಲ್ಲಿ ಒಂದು ಗುರುತನ್ನು ಹಾಕುವರು, ಹೂಣಿಡುವವರು ಅದನ್ನು ಹಾಮೋನ್ ಗೋಗಿನ ಕಣಿವೆಯಲ್ಲಿ ಹೂಳಿಡುವ ತನಕ ಆ ಗುರುತು ಹಾಗೆಯೇ ಇರುವದು.</verse>
				<verse number="16">ಆ ನಗರಕ್ಕೆ ಹಾಮೋನ ಎಂದು ಹೆಸರಾಗುವದು, ಹೀಗೆ ಅವರು ದೇಶವನ್ನು ಶುದ್ಧಿಮಾಡುವರು.’</verse>
				<verse number="17">“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮನುಷ್ಯಪುತ್ರನೇ, ನೀನು ಪ್ರತಿಯೊಂದು ರೀತಿಯ ಪಕ್ಷಿಗಳಿಗೂ ಮತ್ತು ಪ್ರತಿಯೊಂದು ಕಾಡುಮೃಗಗಳಿಗೂ, ‘ಮಾತನಾಡಿ ಒಟ್ಟಾಗಿ ಬನ್ನಿರಿ. ನಾನು ನಿಮಗಾಗಿ ಅರ್ಪಿಸುವ ನನ್ನ ಯಜ್ಞಕ್ಕೋಸ್ಕರ ಪ್ರತಿಯೊಂದು ಕಡೆಯಿಂದಲೂ ಸೇರಿರಿ. ಇದು ಇಸ್ರಾಯೇಲ್ ಪರ್ವತಗಳ ಮೇಲೆ ನಡೆಯುವ ಮಹಾಯಜ್ಞವಾಗಿದೆ. ಅಲ್ಲಿ ನೀವು ಮಾಂಸವನ್ನು ತಿನ್ನಬಹುದು ಮತ್ತು ರಕ್ತವನ್ನು ಕುಡಿಯಬಹುದು.</verse>
				<verse number="18">ಟಗರು, ಕುರಿಮರಿ, ಹೋತ, ಹೋರಿ ಮತ್ತು ಬಾಷಾನಿನ ಕೊಬ್ಬಿದ ಪ್ರಾಣಿಗಳಂತೆ ನೀವು ಶೂರರ ಮಾಂಸವನ್ನು ತಿನ್ನುವಿರಿ ಮತ್ತು ಭೂಮಿಯ ರಾಜಕುಮಾರರ ರಕ್ತವನ್ನು ಕುಡಿಯುವಿರಿ.</verse>
				<verse number="19">ನಾನು ನಿಮಗೋಸ್ಕರ ಅರ್ಪಿಸಿದ ನನ್ನ ಯಜ್ಞದಲ್ಲಿ ನಿಮಗೆ ತೃಪ್ತಿಯಾಗುವವರೆಗೂ ಕೊಬ್ಬನ್ನು ತಿಂದು ಮತ್ತೇರುವವರೆಗೂ ರಕ್ತವನ್ನು ಕುಡಿಯಬಹುದು.</verse>
				<verse number="20">ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ ರಾಹುತ ಶೂರ ಸಕಲ ವಿಧವಾದ ಸೈನಿಕ ಇವರನ್ನು ಬೇಕಾದಷ್ಟು ಭಕ್ಷಿಸುವಿರಿ,’ ಇದು ಸಾರ್ವಭೌಮ ಯೆಹೋವ ದೇವರ ನುಡಿ.</verse>
				<verse number="21">“ನಾನು ನನ್ನ ಮಹಿಮೆಯನ್ನು ಇತರ ಜನಾಂಗಗಳಲ್ಲಿ ಸ್ಥಾಪಿಸಲು ಎಲ್ಲಾ ಜನಾಂಗಗಳು ನಾನು ನಡೆಸಿದ ನನ್ನ ನ್ಯಾಯತೀರ್ಪನ್ನು ಮತ್ತು ಅವರ ಮೇಲೆ ಇರಿಸಿದ ನನ್ನ ಕೈಯನ್ನು ನೋಡುವುವು.</verse>
				<verse number="22">ಹೀಗೆ ಇಸ್ರಾಯೇಲನ ಮನೆತನದವರು ಯೆಹೋವ ದೇವರಾದ ನಾನೇ ಅಂದಿನಿಂದಲೂ ಇನ್ನು ಮುಂದೆಯೂ ಅವರ ದೇವರಾಗಿರುವೆನು ಎಂದು ತಿಳಿಯುವರು.</verse>
				<verse number="23">ಇಸ್ರಾಯೇಲನ ಮನೆತನದವರು ತಮ್ಮ ಅಕ್ರಮಗಳ ನಿಮಿತ್ತವಾಗಿ ಸೆರೆಗೆ ಹೋದರೆಂದು ಇತರ ಜನಾಂಗಗಳು ತಿಳಿಯುವುವು. ಅವರು ನನಗೆ ವಿರೋಧವಾಗಿ ವಿಶ್ವಾಸದ್ರೋಹಮಾಡಿದ್ದರಿಂದ ನಾನು ಅವರಿಗೆ ನನ್ನ ಮುಖವನ್ನು ಮರೆಮಾಡಿಕೊಂಡು ಅವರನ್ನು ಅವರ ವೈರಿಗಳ ಕೈಗೆ ಒಪ್ಪಿಸಿದೆನು. ಹೀಗೆ ಅವರೆಲ್ಲರೂ ಖಡ್ಗದಿಂದ ಹತರಾದರು.</verse>
				<verse number="24">ಅವರ ಅಶುದ್ಧತ್ವದ ಪ್ರಕಾರವೂ ಅವರ ಅಕ್ರಮಗಳ ಪ್ರಕಾರವೂ ನಾನು ಅವರನ್ನು ದಂಡಿಸಿ, ನನ್ನ ಮುಖವನ್ನು ಅವರಿಂದ ಮರೆಮಾಡಿದ್ದೇನೆ.</verse>
				<verse number="25">“ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಪವಿತ್ರ ನಾಮಕ್ಕೆ ಇನ್ನು ಅಪಕೀರ್ತಿ ಬಾರದಂತೆ ನಾನು ಈಗ ಆಸಕ್ತನಾಗಿ ಯಾಕೋಬ್ಯರ ದುರಾವಸ್ಥೆಯನ್ನು ತಪ್ಪಿಸಿ, ಇಸ್ರಾಯೇಲ್ ವಂಶದವರಿಗೆಲ್ಲಾ ಕೃಪೆ ತೋರುವೆನು.</verse>
				<verse number="26">ನಾನು ನನ್ನ ಜನರನ್ನು ಇತರ ಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಬಹು ಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.</verse>
				<verse number="27">ಅನಂತರ ಅವರು ಸ್ವದೇಶದಲ್ಲಿ ಯಾರ ಭಯವೂ ಇಲ್ಲದೆ ನೆಮ್ಮದಿಯಿಂದ ವಾಸಿಸುತ್ತಿರುವಾಗ ತಾವು ನನಗೆ ಮಾಡಿದ ಎಲ್ಲಾ ದ್ರೋಹಗಳ ಹೊರೆಯನ್ನು ಹೊರುತ್ತಾ ತಮ್ಮ ನಾಚಿಕೆಯನ್ನು ಮರೆತುಬಿಡುವರು.</verse>
				<verse number="28">ನಾನು ಅವರನ್ನು ಜನಾಂಗಗಳೊಳಗಿಂದ ಸೆರೆಹೋಗುವಂತೆ ಮಾಡಿ, ಆಮೇಲೆ ಅವರಲ್ಲಿ ಒಬ್ಬರನ್ನಾದರೂ ಉಳಿಸದೆ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ಯೆಹೋವ ದೇವರೆಂದು ಅವರು ತಿಳಿಯುವರು.</verse>
				<verse number="29">ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವುದಿಲ್ಲ. ನಾನು ನನ್ನ ಆತ್ಮವನ್ನು ಇಸ್ರಾಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”</verse>
			</chapter>
			<chapter number="40">
				<verse number="1">ನಮ್ಮ ಸೆರೆಯ ಇಪ್ಪತ್ತೈದನೆಯ ವರ್ಷದ ಆರಂಭದ ತಿಂಗಳಿನ ಹತ್ತನೆಯ ದಿನದಲ್ಲಿ, ಪಟ್ಟಣವು ನಾಶವಾದ ಮೇಲೆ, ಹದಿನಾಲ್ಕನೆಯ ವರ್ಷದ ಅದೇ ದಿನದಲ್ಲಿ, ಯೆಹೋವ ದೇವರ ಕೈ ನನ್ನ ಮೇಲೆ ಇದ್ದು ನನ್ನನ್ನು ಅಲ್ಲಿಗೆ ಬರಮಾಡಿತು.</verse>
				<verse number="2">ದೇವರ ದರ್ಶನಗಳಲ್ಲಿ ಅವರು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ನಿಲ್ಲಿಸಿದರು. ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು.</verse>
				<verse number="3">ಅವರು ನನ್ನನ್ನು ಅಲ್ಲಿಗೆ ತಂದಾಗ, ಅಲ್ಲಿ ಕಂಚಿನಂತೆ ತೋರುವ ಒಬ್ಬ ಮನುಷ್ಯನು ಇದ್ದನು. ಅವನ ಕೈಯಲ್ಲಿ ನಾರಿನ ನೂಲೂ ಅಳತೆಯ ಕೋಲೂ ಇತ್ತು. ಅವನು ಬಾಗಿಲಲ್ಲೇ ನಿಂತಿದ್ದನು.</verse>
				<verse number="4">ಆ ಮನುಷ್ಯನು ನನಗೆ, “ಮನುಷ್ಯಪುತ್ರನೇ ನಿನ್ನ ಕಣ್ಣುಗಳಿಂದ ನೋಡಿ ನಿನ್ನ ಕಿವಿಗಳಿಂದ ಕೇಳು ಮತ್ತು ನಾನು ತೋರಿಸುವ ಎಲ್ಲಾ ಸಂಗತಿಗಳಿಗೆ ನೀನು ಮನಸ್ಸಿಡು. ನಾನು ನಿನಗೆ ಅವುಗಳನ್ನೆಲ್ಲಾ ತೋರಿಸುವುದಕ್ಕಾಗಿಯೇ ಇಲ್ಲಿಗೆ ನಿನ್ನನ್ನು ಬರಮಾಡಿದ್ದೇನೆ. ನೀನು ನೋಡುವುದನ್ನೆಲ್ಲಾ ಇಸ್ರಾಯೇಲ್ ಜನರಿಗೆ ತಿಳಿಸು,” ಎಂದರು.</verse>
				<verse number="5">ನಾನು ದೇವಾಲಯದ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರೆದಿರುವ ಒಂದು ಗೋಡೆಯನ್ನು ಕಂಡೆನು. ಆ ಮನುಷ್ಯನ ಕೈಯಲ್ಲಿದ್ದ ಅಳತೆ ಕೋಲು ಸುಮಾರು ಮೂರು ಮೀಟರ್ ಉದ್ದವಿತ್ತು, ಪ್ರತಿಯೊಂದೂ ಒಂದು ಮೀಟರ್ ಮತ್ತು ಒಂದು ಅಂಗೈ ಅಗಲವಾಗಿತ್ತು. ಆ ಮನುಷ್ಯನು ಗೋಡೆಯನ್ನು ಅಳೆದನು. ಅದು ಒಂದು ಕೋಲು ಅಗಲ ಮತ್ತು ಒಂದು ಕೋಲು ಎತ್ತರವಾಗಿತ್ತು.</verse>
				<verse number="6">ಆಮೇಲೆ ಅವನು ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಬಾಗಿಲಿಗೆ ಬಂದು, ಅದರ ಮೆಟ್ಟಲುಗಳನ್ನು ಹತ್ತಿ ಆ ಬಾಗಿಲಿನ ಹೊಸ್ತಿಲನ್ನು ಅಳೆದನು, ಅದು ಒಂದೇ ಕೋಲು ಅಗಲವಾಗಿತ್ತು. ಅಗಲವಾದ ಹೊಸ್ತಿಲಿನ ಬಾಗಿಲೂ ಅಲ್ಲಿ ಇತ್ತು.</verse>
				<verse number="7">ಕಾವಲುಗಾರರ ಕೋಣೆಯ ಉಪವಿಭಾಗಗಳು ಒಂದು ಕೋಲು ಉದ್ದ ಮತ್ತು ಒಂದು ಕೋಲು ಅಗಲವಿದ್ದವು ಮತ್ತು ಕೋಣೆಯ ಉಪವಿಭಾಗಗಳ ನಡುವಿನ ಗೋಡೆಗಳು ಸುಮಾರು ಮೂರು ಮೀಟರ್ ದಪ್ಪವಾಗಿದ್ದವು. ಮತ್ತು ದೇವಾಲಯಕ್ಕೆ ಎದುರಾಗಿರುವ ದ್ವಾರಮಂಟಪದ ಮುಂದಿನ ಹೆಬ್ಬಾಗಿಲಿನ ಹೊಸ್ತಿಲು ಒಂದು ಕೋಲು ಆಳವಾಗಿತ್ತು.</verse>
				<verse number="8">ನಂತರ ಅವನು ಹೆಬ್ಬಾಗಿಲಿನ ದ್ವಾರಮಂಟಪವನ್ನು ಅಳೆದನು.</verse>
				<verse number="9">ಆಮೇಲೆ ಬಾಗಿಲಿನ ದ್ವಾರಾಂಗಣವನ್ನು ಸುಮಾರು ನಾಲ್ಕು ಮೀಟರ್ ಅದರ ಕಂಬಗಳನ್ನು ಸುಮಾರು ಒಂದು ಮೀಟರ್ ಎಂದು ಅಳೆದನು. ಹೆಬ್ಬಾಗಿಲಿನ ದ್ವಾರಮಂಟಪವು ದೇವಾಲಯಕ್ಕೆ ಎದುರಾಗಿತ್ತು.</verse>
				<verse number="10">ಪೂರ್ವದಿಕ್ಕಿನ ಕೋಣೆಯ ಉಪವಿಭಾಗಗಳು ಈ ಕಡೆಯಲ್ಲಿ ಮೂರೂ ಆ ಕಡೆಯಲ್ಲಿ ಮೂರೂ ಇದ್ದವು. ಆ ಮೂರಕ್ಕೂ ಒಂದೇ ಅಳತೆ ಇತ್ತು. ಎರಡೂ ಕಡೆಯ ಕಂಬಗಳಿಗೂ ಸಹ ಒಂದೇ ಅಳತೆ ಇತ್ತು.</verse>
				<verse number="11">ಅನಂತರ ಅವನು ಹೆಬ್ಬಾಗಿಲ ದ್ವಾರವನ್ನು ಅಳೆದನು. ಅದರ ಅಗಲ ಸುಮಾರು ಐದು ಮೀಟರ್ ಹಾಗು ಉದ್ದ ಸುಮಾರು ಆರುವರೆ ಮೀಟರ್ ಇತ್ತು.</verse>
				<verse number="12">ಪ್ರತಿಯೊಂದು ಕೋಣೆಯ ಉಪವಿಭಾಗಗಳ ಮುಂದೆ ಸುಮಾರು ಅರ್ಧ ಮೀಟರ್ ಎತ್ತರದ ಗೋಡೆಯಿತ್ತು. ಕೋಣೆಯ ಉಪವಿಭಾಗಗಳು ಸುಮಾರು ಮೂರು ಚದರ ಮೀಟರ್ ಆಗಿದ್ದವು.</verse>
				<verse number="13">ಆಗ ಅವನು, ಒಂದು ಕೋಣೆಯ ಉಪವಿಭಾಗದ ಮಾಳಿಗೆಯಿಂದ ಇನ್ನೊಂದು ಕೋಣೆಯ ಉಪವಿಭಾಗದ ಮಾಳಿಗೆಯವರೆಗೆ ಅಳೆದನು. ಆ ದ್ವಾರದಿಂದ ಈ ದ್ವಾರಕ್ಕೇರುವ ಅಗಲವು ಸುಮಾರು ಹದಿಮೂರು ಮೀಟರಿತ್ತು.</verse>
				<verse number="14">ಬಾಗಿಲಿನ ಚೌಕಟ್ಟಿನ ಕಂಬಗಳನ್ನು ಅಳತೆಮಾಡಲು ಸುಮಾರು ಮೂವತ್ತೆರಡು ಮೀಟರ್ ಇದ್ದವು. ಅದು ಬಾಗಿಲಿನ ಸುತ್ತಮುತ್ತಲಿರುವ ಕಂಬದವರೆಗೂ ಇತ್ತು.</verse>
				<verse number="15">ಪ್ರವೇಶದ ಬಾಗಿಲಿನ ಮುಂದುಗಡೆಯಿಂದ ಒಳಬಾಗಿಲಿನ ದ್ವಾರದ ಅಂಗಳದವರೆಗೂ ಸುಮಾರು ಇಪ್ಪತ್ತೇಳು ಮೀಟರ್ ದೂರವಿತ್ತು.</verse>
				<verse number="16">ಕೋಣೆಯ ಉಪವಿಭಾಗಗಳು ಮತ್ತು ಬಾಗಿಲ ಚೌಕಟ್ಟಿನ ಒಳಗಡೆ ಇರುವ ಅವುಗಳ ಕಂಬಗಳಲ್ಲಿಯೂ ಇಕ್ಕಟ್ಟಾದ ಕಿಟಕಿಗಳಿದ್ದವು. ಕೈಸಾಲೆಗಳಿಗೂ ಸಹ ಒಳಗಡೆ ಸುತ್ತಲೂ ಕಿಟಕಿಗಳಿದ್ದವು. ಒಂದೊಂದು ಕಂಬದ ಮೇಲೆ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು.</verse>
				<verse number="17">ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆತಂದನು. ಅಲ್ಲಿ ನಾನು ಕೆಲವು ಕೋಣೆಗಳನ್ನು ಮತ್ತು ಅಂಗಳದ ಸುತ್ತಲೂ ನಿರ್ಮಿಸಲಾದ ಒಂದು ಕಾಲುದಾರಿಯನ್ನು ಕಂಡೆನು. ಕಾಲುದಾರಿ ಉದ್ದಕ್ಕೂ ಮೂವತ್ತು ಕೋಣೆಗಳಿದ್ದವು.</verse>
				<verse number="18">ಬಾಗಿಲುಗಳ ಪಾರ್ಷ್ವದಲ್ಲಿಯೂ ಬಾಗಿಲುಗಳ ಉದ್ದಕ್ಕೆ ಸರಿಯಾಗಿಯೂ ಇದ್ದ ಆ ಕಲ್ಲು ಹಾಸಿದ ನೆಲವು ಕೆಳಗಿನ ನೆಲಗಟ್ಟಾಗಿತ್ತು.</verse>
				<verse number="19">ಆಗ ಅವನು ಕೆಳಗಿನ ಬಾಗಿಲಿನ ಮುಂದುಗಡೆಯಿಂದ ಒಳಗಿನ ಅಂಗಳದ ಹೊರಗಡೆಯವರೆಗೂ ಪೂರ್ವಕ್ಕೂ ಉತ್ತರಕ್ಕೂ ಇರುವ ಅಗಲವನ್ನು ಸುಮಾರು ಐವತ್ತಮೂರು ಮೀಟರ್ ಎಂದು ಅಳೆದನು.</verse>
				<verse number="20">ಇದಲ್ಲದೆ ಉತ್ತರದ ಕಡೆಗೆ ಅಭಿಮುಖವಾದ ಹೊರಗಿನ ಬಾಗಿಲಿನ ಉದ್ದವನ್ನೂ ಅಗಲವನ್ನೂ ಅಳೆದನು.</verse>
				<verse number="21">ಅದರ ಕೋಣೆಯ ಉಪವಿಭಾಗಗಳು ಈ ಕಡೆಗೂ ಆ ಕಡೆಗೂ ಮೂರು ಇದ್ದವು. ಅದರ ಕಂಬಗಳು ಮತ್ತು ಅದರ ಕೈಸಾಲೆಗಳು ಮೊದಲನೆಯ ಬಾಗಿಲಿನ ಅಳತೆಯಂತೆ ಇದ್ದವು. ಅದರ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು.</verse>
				<verse number="22">ಅದರ ಕಿಟಕಿಗಳೂ ಅದರ ಕೈಸಾಲೆಗಳೂ ಅದರ ಖರ್ಜೂರದ ಗಿಡಗಳೂ ಪೂರ್ವ ಕಡೆಯ ಬಾಗಿಲಿನ ಕಡೆಗೆ ಅಭಿಮುಖವಾಗಿದ್ದವು. ಅವರು ಏಳು ಮೆಟ್ಟಲುಗಳನ್ನು ಏರಿದಾಗ, ಅದರ ಕೈಸಾಲೆಗಳು ಅದರ ಮುಂದಿದ್ದವು.</verse>
				<verse number="23">ಒಳಗಿನ ಅಂಗಳದ ಬಾಗಿಲು ಉತ್ತರ ಮತ್ತು ಪೂರ್ವಕ್ಕಿರುವ ಬಾಗಿಲಿಗೆ ಎದುರಾಗಿತ್ತು. ಅವನು ಬಾಗಿಲಿನಿಂದ ಬಾಗಿಲಿಗೆ ಸುಮಾರು ಐವತ್ತಮೂರು ಮೀಟರ್ ಎಂದು ಅಳೆದನು.</verse>
				<verse number="24">ಆಮೇಲೆ ಆತನು ನನ್ನನ್ನು ದಕ್ಷಿಣದ ಕಡೆಗೆ ಕರೆತಂದನು ಅಲ್ಲಿಯೂ ಬಾಗಿಲು ಇತ್ತು, ಅವನು ಅದರ ಕಂಬಗಳನ್ನು ಅದರ ಕೈಸಾಲೆಗಳನ್ನು ಈ ಅಳತೆಯ ಪ್ರಕಾರವೇ ಅಳೆದನು.</verse>
				<verse number="25">ಅದರ ಕೈಸಾಲೆಗಳಲ್ಲಿಯೂ ಸುತ್ತಲೂ ಆ ಕಿಟಕಿಗಳ ಹಾಗೆಯೇ ಕಿಟಕಿಗಳೂ ಇದ್ದವು. ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅಗಲವು ಸುಮಾರು ಹದಿಮೂರು ಮೀಟರ್ ಇತ್ತು.</verse>
				<verse number="26">ಅದಕ್ಕೆ ಏರುವ ಹಾಗೆ ಏಳೂ ಮೆಟ್ಟಲುಗಳು ಇದ್ದವು. ಅದರ ಕೈಸಾಲೆಗಳು ಅದರ ಮುಂದೆ ಇದ್ದವು. ಅದರ ಕಂಬಗಳು ಮೇಲೆ ಆ ಕಡೆಗೂ ಈ ಕಡೆಗೂ ಒಂದೊಂದು ಖರ್ಜೂರದ ಮರದಿಂದ ಅಲಂಕರಿಸಲಾಗಿತ್ತು.</verse>
				<verse number="27">ಒಳಗಿನ ಅಂಗಳದಲ್ಲಿ ದಕ್ಷಿಣದ ಕಡೆಗೆ ಬಾಗಿಲಿತ್ತು. ಅವನು ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿಗೆ ದಕ್ಷಿಣವಾಗಿ ಸುಮಾರು ಐವತ್ತಮೂರು ಮೀಟರ್ ಎಂದು ಅಳೆದನು.</verse>
				<verse number="28">ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಿಲಿನಿಂದ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ದಕ್ಷಿಣದ ಬಾಗಿಲನ್ನು ಅಳೆದನು.</verse>
				<verse number="29">ಅಲ್ಲಿನ ಕೋಣೆಯ ಉಪವಿಭಾಗಗಳನ್ನೂ ಅದರ ಕಂಬಗಳನ್ನೂ ಅದರ ಪಡಸಾಲೆಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಸುತ್ತಲೂ ಇರುವ ಅದರ ಪಡಸಾಲೆಗಳಲ್ಲಿಯೂ ಕಿಟಕಿಗಳಿದ್ದವು. ಅದರ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು.</verse>
				<verse number="30">ಸುತ್ತಲಿರುವ ಕೈಸಾಲೆಗಳೂ ಸುಮಾರು ಇಪ್ಪತ್ತೈದು ಮೀಟರ್ ಉದ್ದವಾಗಿಯೂ ಸುಮಾರು ಹದಿಮೂರು ಮೀಟರ್ ಅಗಲವಾಗಿಯೂ ಇದ್ದವು.</verse>
				<verse number="31">ಅದರ ಪಡಸಾಲೆಗಳು ಹೊರಗಿನ ಅಂಗಳದ ಕಡೆಗಿದ್ದವು. ಅದರ ಕಂಬಗಳಲ್ಲಿ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು. ಅದಕ್ಕೆ ಏರುವುದಕ್ಕೆ ಎಂಟು ಮೆಟ್ಟಲುಗಳು ಇದ್ದವು.</verse>
				<verse number="32">ಅವನು ನನ್ನನ್ನು ಪೂರ್ವದ ಕಡೆಗಿರುವ ಒಳಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅವನು ಈ ಅಳತೆಗಳ ಪ್ರಕಾರ ಬಾಗಿಲನ್ನು ಅಳೆದನು.</verse>
				<verse number="33">ಅಲ್ಲಿನ ಕೋಣೆಯ ಉಪವಿಭಾಗಗಳನ್ನೂ ಅದರ ಕಂಬಗಳನ್ನೂ ಅದರ ಪಡಸಾಲೆಗಳನ್ನೂ ಈ ಅಳತೆಯ ಪ್ರಕಾರ ಅಳೆದನು. ಅದರಲ್ಲಿಯೂ ಸುತ್ತಲೂ ಇರುವ ಅದರ ಪಡಸಾಲೆಗಳಲ್ಲಿಯೂ ಕಿಟಕಿಗಳಿದ್ದವು. ಅದರ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು.</verse>
				<verse number="34">ಅದರ ಪಡಸಾಲೆಗಳು ಹೊರಗಿನ ಅಂಗಳದ ಕಡೆಗೆ ಇದ್ದವು; ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು; ಮೇಲೆ ಹತ್ತುವುದಕ್ಕೆ ಎಂಟು ಮೆಟ್ಟಲುಗಳು ಇದ್ದವು.</verse>
				<verse number="35">ಅವನು ನನ್ನನ್ನು ಉತ್ತರದ ಬಾಗಿಲಿನ ಬಳಿಗೆ ಕರೆದುಕೊಂಡು ಹೋಗಿ ಈ ಅಳತೆಗಳ ಪ್ರಕಾರ ಅಳೆದನು;</verse>
				<verse number="36">ಅಲ್ಲಿಯ ಕೋಣೆಯ ಉಪವಿಭಾಗಗಳು, ಅಲ್ಲಿನ ಕಂಬಗಳು, ಅಲ್ಲಿನ ಕೈಸಾಲೆಗಳು ಮತ್ತು ಅದರ ಸುತ್ತಲೂ ಇರುವ ಕಿಟಕಿಗಳ ಉದ್ದವು ಸುಮಾರು ಇಪ್ಪತ್ತೈದು ಮೀಟರ್ ಮತ್ತು ಅದರ ಅಗಲವು ಸುಮಾರು ಹದಿಮೂರು ಮೀಟರ್ ಇತ್ತು.</verse>
				<verse number="37">ಅದರ ಪಡಸಾಲೆಗಳು ಹೊರಗಿನ ಅಂಗಳದ ಕಡೆಗೆ ಇದ್ದವು. ಅದರ ಕಂಬಗಳ ಮೇಲೆ ಆ ಕಡೆಗೂ ಈ ಕಡೆಗೂ ಖರ್ಜೂರದ ಮರಗಳಿಂದ ಅಲಂಕರಿಸಲಾಗಿದ್ದವು; ಮೇಲೆ ಹತ್ತುವುದಕ್ಕೆ ಎಂಟು ಮೆಟ್ಟಲುಗಳು ಇದ್ದವು.</verse>
				<verse number="38">ಕೊಠಡಿಗಳೂ ಅವುಗಳ ಪ್ರವೇಶಗಳೂ ಬಾಗಿಲುಗಳ ಕಂಬಗಳ ಬಳಿಯಲ್ಲಿ, ದಹನಬಲಿಯನ್ನು ತೊಳೆಯುವಲ್ಲಿ ಇದ್ದವು;</verse>
				<verse number="39">ಕೈಸಾಲೆಯಲ್ಲಿ ಎರಡು ಕಡೆಯಲ್ಲಿಯೂ ಎರಡು ಮೇಜುಗಳು ಈ ಕಡೆಗೆ ಮತ್ತು ಎರಡು ಮೇಜುಗಳು ಆ ಕಡೆಗೆ ಇದ್ದವು. ದಹನಬಲಿಯನ್ನೂ ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ವಧಿಸುವ ಹಾಗೆ ಅವು ಇದ್ದವು.</verse>
				<verse number="40">ಉತ್ತರ ಹೆಬ್ಬಾಗಿಲ ಪ್ರವೇಶಸ್ಥಾನದ ಮೆಟ್ಟಲುಗಳ ಹತ್ತಿರ, ಆ ಬಾಗಿಲ ಕೈಸಾಲೆಯ ಹೊರಗೆ, ಒಂದು ಕೊನೆಯಲ್ಲಿ ಎರಡು ಮೇಜುಗಳೂ ಇದ್ದವು.</verse>
				<verse number="41">ಬಾಗಿಲಿನ ಕೊನೆಯಲ್ಲಿ ಈ ಕಡೆ ನಾಲ್ಕು ಮೇಜುಗಳೂ ಆ ಕಡೆ ನಾಲ್ಕು ಮೇಜುಗಳೂ ಈ ರೀತಿ ಎಂಟು ಮೇಜುಗಳಿದ್ದವು; ಇವುಗಳ ಮೇಲೆ ಅವರು ಯಜ್ಞಗಳನ್ನು ಅರ್ಪಿಸುತ್ತಿದ್ದರು.</verse>
				<verse number="42">ದಹನಬಲಿಗಾಗಿ ಇದ್ದ ಆ ನಾಲ್ಕು ಮೇಜುಗಳು ಕೆತ್ತಿದ ಕಲ್ಲುಗಳಿಂದ ನಿರ್ಮಿತವಾಗಿದ್ದವು. ಅವುಗಳ ಉದ್ದ ಮತ್ತು ಅಗಲ ಸುಮಾರು ಎಂಬತ್ತು ಸೆಂಟಿಮೀಟರ್, ಎತ್ತರವೂ ಸುಮಾರು ಐವತ್ತಮೂರು ಸೆಂಟಿಮೀಟರ್. ಇವುಗಳ ಮೇಲೆ ಅವರು ದಹನಬಲಿಯನ್ನೂ ಅರ್ಪಣೆಯನ್ನೂ ವಧಿಸುವ ಸಲಕರಣೆಗಳನ್ನೂ ಇಡುತ್ತಿದ್ದರು.</verse>
				<verse number="43">ಒಳಗೆ ಸುತ್ತಲಾಗಿ ಅಂಗೈ ಅಗಲದಷ್ಟು ಕೊಂಡಿಗಳು ಜಡಿಯಲಾಗಿದ್ದವು. ಮೇಜುಗಳ ಮೇಲೆ ಬಲಿಯ ಮಾಂಸವಿತ್ತು.</verse>
				<verse number="44">ಅನಂತರ ಅವನು ನನ್ನನ್ನು ಒಳಗಿನ ಪ್ರಾಕಾರಕ್ಕೆ ಕರೆತಂದರು. ಅಲ್ಲಿ ಎರಡು ಕೊಠಡಿಗಳು ಇದ್ದವು. ಒಂದು ಉತ್ತರದ ಬಾಗಿಲಿನ ಕಡೆಗೆ ದಕ್ಷಿಣಕ್ಕೆ ಅಭಿಮುಖವಾಗಿತ್ತು; ಮತ್ತೊಂದು ಪೂರ್ವದ ಬಾಗಿಲಿನ ಕಡೆಗೆ ಉತ್ತರಕ್ಕೆ ಅಭಿಮುಖವಾಗಿತ್ತು.</verse>
				<verse number="45">ಅವನು ನನಗೆ ಹೇಳಿದ್ದೇನೆಂದರೆ, “ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೊಠಡಿ ದೇವಾಲಯದ ಮೇಲ್ವಿಚಾರಣೆಯನ್ನು ನೋಡಿಕೊಳ್ಳುವ ಯಾಜಕರದು.</verse>
				<verse number="46">ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಬಲಿಪೀಠದ ಮೇಲ್ವಿಚಾರಕರಾದ ಯಾಜಕರದು. ಚಾದೋಕನ ಪುತ್ರರಾದ ಇವರು ಲೇವಿಯ ಕುಲದವರಲ್ಲಿ ಯೆಹೋವ ದೇವರ ಸನ್ನಿಧಿಯ ಸೇವಕರಾಗಿದ್ದಾರೆ.”</verse>
				<verse number="47">ಹೀಗೆ ಅವನು ಅಂಗಳವನ್ನು ಅಳೆದನು. ಅದರ ಉದ್ದವು ಸುಮಾರು ಐವತ್ತು ಮೀಟರ್, ಅಗಲವು ಸುಮಾರು ಐವತ್ತು ಮೀಟರ್ ಚಚ್ಚೌಕವಾಗಿತ್ತು. ಆ ಬಲಿಪೀಠವು ದೇವಾಲಯದ ಮುಂದೆ ಇತ್ತು.</verse>
				<verse number="48">ಅವನು ನನ್ನನ್ನು ಮನೆಯ ದ್ವಾರಮಂಟಪಕ್ಕೆ ಕರೆದುಕೊಂಡು ಹೋಗಿ, ದ್ವಾರಮಂಟಪ ಪ್ರತಿಯೊಂದು ಕಂಬವನ್ನೂ ಅಳೆದನು. ದ್ವಾರಮಂಟಪ ಅಗಲವು ಸುಮಾರು ಏಳು ಮೀಟರ್ ಮತ್ತು ಪಕ್ಕದ ಗೋಡೆಗಳ ಅಗಲವು ಎರಡೂ ಬದಿಗಳಲ್ಲಿ ಸುಮಾರು ಒಂದೂವರೆ ಮೀಟರ್ ಆಗಿತ್ತು.</verse>
				<verse number="49">ದ್ವಾರಮಂಟಪದ ಅಗಲವು ಸುಮಾರು ಹನ್ನೊಂದು ಮೀಟರ್ ಮತ್ತು ಮುಂಭಾಗದಿಂದ ಹಿಂಭಾಗಕ್ಕೆ ಸುಮಾರು ಆರು ಮೀಟರ್. ಅದನ್ನು ಹತ್ತಲು ಮೆಟ್ಟಿಲುಗಳಿದ್ದವು ಮತ್ತು ಎರಡೂ ಬದಿಗಳಲ್ಲಿ ಬಾಗಿಲಿನ ಚೌಕಟ್ಟುಗಳ ಬದಿಗಳಲ್ಲಿ ಕಂಬಗಳು ಇದ್ದವು.</verse>
			</chapter>
			<chapter number="41">
				<verse number="1">ಆಮೇಲೆ, ಆ ಮನುಷ್ಯನು ನನ್ನನ್ನು ದೇವಾಲಯಕ್ಕೆ ಕರೆತಂದು ಕಂಬಗಳನ್ನು ಎರಡೂ ಕಡೆಯಲ್ಲಿ ಸುಮಾರು 3.2 ಮೀಟರ್ ಎಂದು ಅಳೆದನು. ಇದೇ ಆ ಗುಡಾರದ ಉದ್ದಗಲವಾಗಿತ್ತು.</verse>
				<verse number="2">ಬಾಗಿಲಿನ ಅಗಲವು ಸುಮಾರು ಐದು ಮೀಟರ್ ಮತ್ತು ಅದರ ಎರಡೂ ಬದಿಗಳಲ್ಲಿ ಗೋಡೆಗಳ ಅಗಲ ಸುಮಾರು ಎರಡೂವರೆ ಮೀಟರ್. ಅವನು ಮುಖ್ಯಸಭಾಂಗಣವನ್ನೂ ಅಳೆದನು. ಅದು ಸುಮಾರು ಇಪ್ಪತ್ತೊಂದು ಮೀಟರ್ ಉದ್ದ ಮತ್ತು ಸುಮಾರು ಹನ್ನೊಂದು ಮೀಟರ್ ಅಗಲವಿತ್ತು.</verse>
				<verse number="3">ಅನಂತರ ಅವನು ಒಳಗೆ ಹೋಗಿ ಪರಿಶುದ್ಧಸ್ಥಳದ ಪ್ರವೇಶದ್ವಾರದ ಕಂಬಗಳನ್ನು ಅಳೆದನು; ಒಂದೊಂದು ಕಂಬವು ಸುಮಾರು ಒಂದು ಮೀಟರ್ ಅಗಲವಿತ್ತು. ಪ್ರವೇಶದ್ವಾರವು ಸುಮಾರು ಮೂರು ಮೀಟರ್ ಅಗಲವಾಗಿತ್ತು ಮತ್ತು ಅದರ ಎರಡೂ ಬದಿಯ ಗೋಡೆಯು ಸುಮಾರು ನಾಲ್ಕು ಮೀಟರ್ ಅಗಲವಾಗಿತ್ತು.</verse>
				<verse number="4">ಅವನು ಒಳಗಿನ ಪರಿಶುದ್ಧಸ್ಥಳದ ಉದ್ದವನ್ನು ಅಳೆದನು; ಅದು ಸುಮಾರು ಹತ್ತು ಮೀಟರ್ ಆಗಿತ್ತು; ಅದರ ಅಗಲವು ಮುಖ್ಯ ಸಭಾಂಗಣದ ಕೊನೆಯವರೆಗೂ ಸುಮಾರು ಹತ್ತು ಮೀಟರ್ ಆಗಿತ್ತು. ಅವನು ನನಗೆ, “ಇದು ಅತ್ಯಂತ ಪವಿತ್ರ ಸ್ಥಳವಾಗಿದೆ” ಎಂದು ಹೇಳಿದನು.</verse>
				<verse number="5">ಅನಂತರ ಅವನು ಆಲಯದ ಗೋಡೆಯನ್ನು ಅಳೆದನು; ಅದು ಸುಮಾರು ಮೂರು ಮೀಟರ್ ದಪ್ಪವಾಗಿತ್ತು, ಮತ್ತು ಆಲಯದ ಸುತ್ತಲಿನ ಕೋಣೆಗಳ ಅಗಲವು ಪ್ರತಿ ಬದಿಯಲ್ಲಿ ಸುಮಾರು ಎರಡು ಮೀಟರ್ ಆಗಿತ್ತು.</verse>
				<verse number="6">ಆ ಕೊಠಡಿಗಳು ಒಂದರ ಮೇಲೊಂದು ಮೂರು ಅಂತಸ್ತಾಗಿದ್ದವು; ಒಂದೊಂದು ಅಂತಸ್ತಿನಲ್ಲಿ ಮೂವತ್ತು ಮೂವತ್ತು ಕೊಠಡಿಗಳಿದ್ದವು. ಪಕ್ಕದ ಕೋಣೆಗಳಿಗೆ ಆಧಾರವಾಗಿ ದೇವಾಲಯದ ಗೋಡೆಯ ಸುತ್ತಲೂ ಮುಂಚಾಚಿರುವಿಕೆಗಳು ಇದ್ದವು. ಇದರಿಂದಾಗಿ ಪೋಷಕ ಭಾಗಗಳನ್ನು ದೇವಾಲಯದ ಗೋಡೆಯೊಳಗೆ ಸೇರಿಸಲಾಗಿಲ್ಲ.</verse>
				<verse number="7">ಸುತ್ತಣ ಅಂತಸ್ತುಗಳು ಮೇಲೆ ಮೇಲೆ ಹೋದ ಹಾಗೆ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು. ಅವು ಮನೆಯನ್ನು ಸುತ್ತಿಕೊಂಡು ಮೇಲೆ ಮೇಲೆ ಹೋದ ಹಾಗೆಲ್ಲಾ ಅದನ್ನು ಬಿಗಿಯಾಗಿ ಹಿಡಿದುಕೊಂಡಂತೆ ಇದ್ದವು; ಹೀಗೆ ಮೇಲಿನ ಅಂತಸ್ತುಗಳು ಮನೆಯ ಕಡೆಗೆ ಅಗಲವಾಗುತ್ತಾ ಬಂದವು; ಕೆಳಗಿನ ಅಂತಸ್ತಿನಿಂದ ಮಧ್ಯದ ಅಂತಸ್ತಿನ ಮಾರ್ಗವಾಗಿ ಮೇಲಿನ ಅಂತಸ್ತಿಗೆ ಹತ್ತುತ್ತಿದ್ದವು.</verse>
				<verse number="8">ಆಲಯದ ಸುತ್ತಮುತ್ತಲೂ ಒಂದು ಜಗಲಿಯನ್ನು ನಾನು ನೋಡಿದೆನು. ಅದು ಪಕ್ಕದ ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಸುಮಾರು ಆರು ಮೊಳದ ಅಳತೆಯ ಕೋಲಿನಷ್ಟು ಎತ್ತರವಾಗಿತ್ತು.</verse>
				<verse number="9">ಹೊರಗಡೆಯಲ್ಲಿ ಪಕ್ಕದ ಕೊಠಡಿಗಳಿಗಾದ ಗೋಡೆಯ ದಪ್ಪವು ಐದು ಮೊಳ ಮತ್ತು ಉಳಿದದ್ದು ಒಳಗಿನ ಕಡೆಯ ಕೊಠಡಿಗಳ ಸ್ಥಳವಾಗಿತ್ತು.</verse>
				<verse number="10">ಕೊಠಡಿಗಳ ನಡುವೆ ಆಲಯದ ಸುತ್ತಲೂ ಪ್ರತಿಯೊಂದು ಕಡೆಗೂ ಇಪ್ಪತ್ತು ಮೊಳ ಅಗಲವಿತ್ತು;</verse>
				<verse number="11">ಪಕ್ಕದ ಕೊಠಡಿಗಳ ಬಾಗಿಲುಗಳು ತೆರೆದ ಸ್ಥಳದ ಕಡೆಗೆ ಇದ್ದವು. ಉತ್ತರದ ಕಡೆಗೆ ಒಂದು ಬಾಗಿಲೂ ದಕ್ಷಿಣದ ಕಡೆಗೆ ಮತ್ತೊಂದು ಬಾಗಿಲೂ ಇತ್ತು; ತೆರೆದ ಸ್ಥಳದ ಅಗಲವು ಸುತ್ತಲೂ ಐದು ಮೊಳವಾಗಿತ್ತು.</verse>
				<verse number="12">ಈಗ ಪ್ರತ್ಯೇಕಿಸಿದ ಸ್ಥಳಕ್ಕೆ ಎದುರಾಗಿ ಪಶ್ಚಿಮದ ಕಡೆಗಿದ್ದ ಕಟ್ಟಡವು ಎಪ್ಪತ್ತು ಮೊಳ ಅಗಲವಾಗಿತ್ತು; ಕಟ್ಟಡದ ಗೋಡೆಯು ಸುತ್ತಲೂ ಐದು ಮೊಳ ದಪ್ಪವಾಗಿತ್ತು. ಅದರ ಉದ್ದವು ತೊಂಬತ್ತು ಮೊಳವಾಗಿತ್ತು.</verse>
				<verse number="13">ಹೀಗೆ ಅವನು ಆಲಯವನ್ನು ನೂರು ಮೊಳ ಉದ್ದವೆಂದೂ; ಪ್ರತ್ಯೇಕಿಸಿದ ಸ್ಥಳವನ್ನೂ ಮತ್ತು ಕಟ್ಟಡವನ್ನೂ ಗೋಡೆಗಳ ಸಹಿತವಾಗಿ ನೂರು ಮೊಳ ಉದ್ದವೆಂದೂ ಅಳೆದನು;</verse>
				<verse number="14">ಇದಲ್ಲದೆ ಆಲಯದ ಮುಂಭಾಗವು ಪೂರ್ವದ ಕಡೆಗೆ ಇದ್ದ ಪ್ರತ್ಯೇಕ ಸ್ಥಳಗಳು ನೂರು ಮೊಳ ಅಗಲವಾಗಿದ್ದವು.</verse>
				<verse number="15">ಪ್ರತ್ಯೇಕ ಸ್ಥಳಕ್ಕೆ ಎದುರಾಗಿಯೂ ಹಿಂದೆಯೂ ಇದ್ದಂಥ ಕಟ್ಟಡವನ್ನು ಅಂದರೆ ಶಾಲೆಗಳನ್ನೂ ಆ ಕಡೆ ಮತ್ತು ಈ ಕಡೆ ನೂರು ಮೊಳವೆಂದೂ ಅಳೆದನು. ಮುಖ್ಯ ಸಭಾಂಗಣ, ಗರ್ಭಗೃಹ ಮತ್ತು ಅಂಗಳದ ಮುಂಭಾಗದಲ್ಲಿ ದ್ವಾರಮಂಟಪ,</verse>
				<verse number="16">ಹಾಗೆಯೇ ಗರ್ಭಗೃಹ, ಪ್ರಾಕಾರದಲ್ಲಿನ ದ್ವಾರಮಂಟಪಗಳು, ಹೊಸ್ತಿಲುಗಳು ಮತ್ತು ಇಕ್ಕಟ್ಟಾದ ಕಿಟಕಿಗಳನ್ನೂ ಮತ್ತು ಅದರ ಸುತ್ತಲೂ ಇದ್ದಂತಹ ಮೂರು ಅಂತಸ್ತುಗಳಲ್ಲಿ ಬಾಗಿಲಿಗೆ ಎದುರಾಗಿ ಸುತ್ತಲೂ ಮರದಿಂದ ಹೊದಿಕೆಯಾಗಿದ್ದವು. ನೆಲ, ಕಿಟಕಿಯವರೆಗಿನ ಗೋಡೆ ಮತ್ತು ಕಿಟಕಿಗಳನ್ನು ಮುಚ್ಚಲಾಯಿತು.</verse>
				<verse number="17">ಬಾಗಿಲಿನ ಮೇಲಕ್ಕೂ ಒಳಗಿನ ಆಲಯದವರೆಗೂ ಮತ್ತು ಹೊರಗೂ ಸುತ್ತಲೂ ಇದ್ದ ಗೋಡೆ, ಹೀಗೆ ಒಳಗೂ ಹೊರಗೂ ಎಲ್ಲವನ್ನೂ ಅಳೆದನು.</verse>
				<verse number="18">ಅದು ಕೆರೂಬಿಗಳು ಮತ್ತು ಖರ್ಜೂರದ ಮರಗಳ ಚಿತ್ರಗಳಿಂದ ಕೂಡಿತ್ತು. ಕೆರೂಬಿ ಮತ್ತು ಕೆರೂಬಿಗಳ ಮಧ್ಯೆ ಖರ್ಜೂರದ ಮರವಿತ್ತು ಮತ್ತು ಪ್ರತಿಯೊಂದು ಕೆರೂಬಿಗೂ ಎರಡೆರಡು ಮುಖಗಳು ಇದ್ದವು.</verse>
				<verse number="19">ಹೀಗೆ ಈ ಕಡೆ ಖರ್ಜೂರದ ಮರದ ಎದುರಿಗೆ ಮನುಷ್ಯನ ಮುಖವು, ಆ ಕಡೆ ಖರ್ಜೂರದ ಮರದ ಎದುರಿಗೆ ಪ್ರಾಯದ ಸಿಂಹದ ಮುಖವೂ ಇತ್ತು; ಹೀಗೆ ಆಲಯದ ತುಂಬಾ ಮತ್ತು ಸುತ್ತಮುತ್ತಲೂ ಚಿತ್ರಮಯವಾಗಿತ್ತು.</verse>
				<verse number="20">ನೆಲವು ಮೊದಲುಗೊಂಡು ಬಾಗಿಲಿನ ಮೇಲಿನವರೆಗೂ ದೇವಾಲಯದ ಗೋಡೆಯಲ್ಲಿಯೂ ಕೆರೂಬಿಗಳು ಮತ್ತು ಖರ್ಜೂರದ ಮರಗಳು ಚಿತ್ರಮಯವಾಗಿದ್ದವು.</verse>
				<verse number="21">ಮುಖ್ಯ ಸಭಾಂಗಣದ ಕಂಬಗಳು ಚಚ್ಚೌಕವಾಗಿದ್ದವು. ಮಹಾಪರಿಶುದ್ಧ ಸ್ಥಳವೂ ಸಹ ಹಾಗೆಯೇ ಇತ್ತು.</verse>
				<verse number="22">ಸುಮಾರು ಒಂದೂವರೆ ಮೀಟರ್ ಎತ್ತರ ಮತ್ತು ಸುಮಾರು ಒಂದು ಮೀಟರ್ ಉದ್ದ ಮತ್ತು ಅಗಲವಿರುವ ಮರದ ಬಲಿಪೀಠವಿತ್ತು. ಅದರ ಮೂಲೆಗಳು, ಅದರ ತಳ ಮತ್ತು ಅದರ ಬದಿಗಳು ಮರದಿಂದ ಆಗಿದ್ದವು. ಆ ಮನುಷ್ಯನು ನನಗೆ, “ಇದು ಯೆಹೋವ ದೇವರ ಮುಂದೆ ಇರುವ ಮೇಜು” ಎಂದು ಹೇಳಿದನು.</verse>
				<verse number="23">ದೇವಾಲಯಕ್ಕೂ ಮಹಾಪರಿಶುದ್ಧ ಸ್ಥಳಕ್ಕೂ ಎರಡು ಬಾಗಿಲುಗಳಿದ್ದವು.</verse>
				<verse number="24">ಆ ಎರಡು ಬಾಗಿಲುಗಳಿಗೆ ಎರಡು ಕದಗಳಿದ್ದವು, ಆ ಸುತ್ತಿಕೊಳ್ಳುವ ಕದಗಳು ಒಂದು ಬಾಗಿಲಿಗೆ ಎರಡು, ಇನ್ನೊಂದು ಬಾಗಿಲಿಗೆ ಎರಡು ಇದ್ದವು.</verse>
				<verse number="25">ಆಲಯದ ಬಾಗಿಲುಗಳ ಮೇಲೆ ಕೆರೂಬಿಗಳೂ ಖರ್ಜೂರದ ಮರಗಳೂ ಗೋಡೆಗಳ ಮೇಲೆ ಚಿತ್ರಿತವಾಗುವ ಹಾಗೆಯೇ ಚಿತ್ರಿತವಾಗಿದ್ದವು. ದ್ವಾರಾಂಗಣದ ಮುಂದೆ ಹೊರಗಡೆಯಲ್ಲಿ ದಪ್ಪವಾದ ಹಲಗೆಗಳಿದ್ದವು.</verse>
				<verse number="26">ಇದಲ್ಲದೆ, ಈ ಕಡೆಯೂ ಆ ಕಡೆಯೂ ದ್ವಾರಾಂಗಣದ ಪಕ್ಕಕ್ಕೂ ಆಲಯದ ಪಕ್ಕದ ಕೊಠಡಿಗಳಿಗೂ ಇಕ್ಕಟ್ಟಾದ ಕಿಟಕಿಗಳೂ ಇದ್ದವು; ದಪ್ಪದ ಹಲಗೆಗಳೂ ಸಹ ಇದ್ದವು.</verse>
			</chapter>
			<chapter number="42">
				<verse number="1">ಆಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ, ಪ್ರತ್ಯೇಕವಾದ ಸ್ಥಳಕ್ಕೆ ಎದುರಾಗಿಯೂ ಉತ್ತರದ ಕಡೆಯಲ್ಲಿ ಕಟ್ಟಡದ ಮುಂದೆ ಇದ್ದ ಕೊಠಡಿಗೆ ಕರೆತಂದನು.</verse>
				<verse number="2">ಉತ್ತರ ಭಾಗದಲ್ಲಿ ಬಾಗಿಲು ಇದ್ದ ಕಟ್ಟಡವು ಸುಮಾರು ಐವತ್ತೆರಡು ಮೀಟರ್ ಉದ್ದ ಮತ್ತು ಇಪ್ಪತ್ತಾರು ಮೀಟರ್ ಅಗಲವಿತ್ತು.</verse>
				<verse number="3">ಒಳಗಿನ ಅಂಗಳಕ್ಕೆ ಇದ್ದ ಇಪ್ಪತ್ತು ಮೊಳಕ್ಕೆ ಎದುರಾಗಿಯೂ ಹೊರಗಿನ ಅಂಗಳಕ್ಕೆ ಇದ್ದ ಕಲ್ಲು ಹಾಸಿದ ನೆಲಕ್ಕೆ ಎದುರಾಗಿಯೂ ಮೂರು ಅಂತಸ್ತುಗಳಲ್ಲಿಯೂ ಪಡಸಾಲೆಗಳ ಮೇಲೆ ಪಡಸಾಲೆಗಳಿದ್ದವು.</verse>
				<verse number="4">ಕೊಠಡಿಗಳ ಮುಂದೆ ಸುಮಾರು ಐದು ಮೀಟರ್ ಅಗಲ ಮತ್ತು ಸುಮಾರು ಐವತ್ತೆರಡು ಮೀಟರ್ ಉದ್ದದ ಒಳ ಮಾರ್ಗವಿತ್ತು. ಅದರ ಬಾಗಿಲುಗಳು ಉತ್ತರಕ್ಕೆ ಎದುರಾಗಿದ್ದವು.</verse>
				<verse number="5">ಈಗ ಮೇಲಿನ ಕೊಠಡಿಗಳೇ ಚಿಕ್ಕದಾಗಿದ್ದವು. ಏಕೆಂದರೆ ಕಟ್ಟಡದ ಕೆಳಗಿನ ಭಾಗಕ್ಕಿಂತಲೂ ಮತ್ತು ಮಧ್ಯ ಭಾಗಕ್ಕಿಂತಲೂ ಪಡಸಾಲೆಗಳು ಎತ್ತರದಲ್ಲಿದ್ದವು.</verse>
				<verse number="6">ಇವು ಮೂರು ಅಂತಸ್ತುಗಳಾಗಿದ್ದವು. ಆದರೆ ಅಂಗಳದ ಕಂಬಗಳ ಹಾಗೆ ಇವುಗಳಿಗೆ ಕಂಬಗಳಿರಲಿಲ್ಲ. ಆದ್ದರಿಂದ ನೆಲಕ್ಕೆ ಎತ್ತರದಲ್ಲಿನ ಮೇಲಣ ಕೋಣೆಗಳು ಕೆಳಗಿನ ಮತ್ತು ನಡುವಣ ಕೋಣೆಗಳಿಗಿಂತ ಚಿಕ್ಕದಾಗಿದ್ದವು.</verse>
				<verse number="7">ಕೊಠಡಿಗಳಿಗೆ ಎದುರಾಗಿ ಹೊರಗಿದ್ದ ಗೋಡೆಯು ಕೊಠಡಿಗಳ ಮುಂದೆ ಹೊರಗಿನ ಅಂಗಳದ ಕಡೆಗೆ ಇದ್ದದ್ದು ಐವತ್ತು ಮೊಳ ಉದ್ದವಾಗಿತ್ತು.</verse>
				<verse number="8">ಏಕೆಂದರೆ ಹೊರಗಿನ ಅಂಗಳದಲ್ಲಿದ್ದ ಕೊಠಡಿಗಳ ಉದ್ದವು ಐವತ್ತು ಮೊಳ ಉದ್ದವಾಗಿಯೂ ಮತ್ತು ದೇವಾಲಯದ ಮುಂದೆ ನೂರು ಮೊಳಗಳಿದ್ದವು.</verse>
				<verse number="9">ಈ ಕೊಠಡಿಗಳ ಕೆಳಗೆ ಹೊರಗಿನ ಅಂಗಳದಿಂದ ಅವುಗಳೊಳಗೆ ಪ್ರವೇಶಿಸುವ ಹಾಗೆ ಪೂರ್ವದಿಕ್ಕಿಗೆ ಪ್ರವೇಶವಿತ್ತು.</verse>
				<verse number="10">ಕೊಠಡಿಗಳು ಪೂರ್ವದ ಕಡೆಗೆ ಅಂಗಳದ ಗೋಡೆಯ ಪ್ರತ್ಯೇಕ ಸ್ಥಳಕ್ಕೂ ಕಟ್ಟಡಕ್ಕೂ ಎದುರಾಗಿದ್ದವು.</verse>
				<verse number="11">ಅವುಗಳ ಮುಂದಿನ ದಾರಿಯು ಉತ್ತರದ ಕಡೆಯಲ್ಲಿದ್ದ ಕೊಠಡಿಗಳ ಆಕಾರದ ಹಾಗೆಯೇ ಇತ್ತು. ಅವುಗಳ ಉದ್ದವೂ ಅಗಲವೂ ಒಂದೇ ಆಗಿತ್ತು. ಉತ್ತರ ದಿಕ್ಕಿನ ಬಾಗಿಲುಗಳು</verse>
				<verse number="12">ದಕ್ಷಿಣ ಕಡೆಗಿದ್ದ ಕೊಠಡಿಗಳ ಬಾಗಿಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ ಪೂರ್ವದ ಕಡೆಯ ಗೋಡೆಗೆ ಸರಿಯಾದ ಮಾರ್ಗದ ಕೊನೆಯಲ್ಲಿ ಒಂದು ಬಾಗಿಲಿತ್ತು.</verse>
				<verse number="13">ಆಗ ಅವನು ನನಗೆ, “ಪ್ರತ್ಯೇಕ ಸ್ಥಳದ ಮುಂದೆ ಇರುವ ಉತ್ತರ ಮತ್ತು ದಕ್ಷಿಣದ ಕೊಠಡಿಗಳು ಪರಿಶುದ್ಧವಾದವು. ಅಲ್ಲಿ ಯೆಹೋವ ದೇವರಿಗಾಗಿ ಬರುವ ಯಾಜಕರು ಅತಿ ಪರಿಶುದ್ಧ ಪದಾರ್ಥಗಳನ್ನು ಭುಜಿಸುತ್ತಾರೆ. ಮತ್ತು ಕಾಣಿಕೆಯನ್ನೂ ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ಅಲ್ಲಿಡುತ್ತಾರೆ. ಆ ಸ್ಥಳವು ಪರಿಶುದ್ಧ.</verse>
				<verse number="14">ಯಾಜಕರು ಅವುಗಳಲ್ಲಿ ಪ್ರವೇಶಿಸುವಾಗ ಅವರು ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗಿನ ಅಂಗಳಕ್ಕೆ ಹೋಗಬಾರದು. ಅವರು ತಾವು ಸೇವೆಗಾಗಿ ಧರಿಸಿದ ವಸ್ತ್ರಗಳನ್ನು ಅಲ್ಲೇ ತೆಗೆದಿಡಬೇಕು. ಏಕೆಂದರೆ ಅವು ಪರಿಶುದ್ಧವಾಗಿವೆ. ಅವರು ಜನರಿಗೆ ಸಂಬಂಧಪಟ್ಟ ಬೇರೆ ವಸ್ತ್ರಗಳನ್ನು ಧರಿಸಿಕೊಂಡು ಸಮೀಪಿಸಬೇಕು,” ಎಂದನು.</verse>
				<verse number="15">ಹೀಗೆ ಅವನು ಒಳಗಿನ ಆಲಯದ ಅಳತೆಮಾಡಿ ಮುಗಿಸಿದ ಮೇಲೆ ನನ್ನನ್ನು ಪೂರ್ವದ ಕಡೆಗೆ ಅಭಿಮುಖವಾಗಿರುವ ಬಾಗಿಲಿನಿಂದ ಹೊರಗೆ ತಂದು ಅದನ್ನು ಸುತ್ತಲಾಗಿ ಅಳೆದನು.</verse>
				<verse number="16">ಅವನು ಅಳೆಯುವ ಕೋಲಿನಿಂದ ಪೂರ್ವದ ಭಾಗವನ್ನು ಅಳೆದನು. ಅದು ಅಳೆಯುವ ಕೋಲಿನ ಪ್ರಕಾರ ಸುಮಾರು 265 ಮೀಟರ್ ಆಗಿತ್ತು.</verse>
				<verse number="17">ಉತ್ತರದ ಕಡೆಯಲ್ಲಿಯೂ ಸಹ ಅವನು ಉತ್ತರದ ಭಾಗವನ್ನು ಅಳತೆಯ ಕೋಲಿನ ಪ್ರಕಾರ ಸುತ್ತಲಾಗಿ ಸುಮಾರು 265 ಮೀಟರ್ ಎಂದು ಅಳೆದನು.</verse>
				<verse number="18">ಅವನು ಅಳತೆಯ ಕೋಲಿನಿಂದ ದಕ್ಷಿಣದ ಭಾಗವನ್ನು ಸುಮಾರು 265 ಮೀಟರ್ ಎಂದು ಅಳೆದನು.</verse>
				<verse number="19">ಅವನು ಪಶ್ಚಿಮದ ಕಡೆಗೆ ತಿರುಗಿ ಅಳತೆಯ ಕೋಲಿನಿಂದ ಸುಮಾರು 265 ಮೀಟರ್ ಎಂದು ಅಳೆದನು.</verse>
				<verse number="20">ಅವನು ನಾಲ್ಕು ಕಡೆಗಳಿಂದ ಅಳೆದನು. ಪರಿಶುದ್ಧವಾದ ಮತ್ತು ಅಪರಿಶುದ್ಧವಾದ ಸ್ಥಳವನ್ನೂ ಪ್ರತ್ಯೇಕಪಡಿಸುವ ಹಾಗೆ ಅದಕ್ಕೆ ಸುತ್ತಲು ಸುಮಾರು 265 ಮೀಟರ್ ಉದ್ದ ಮತ್ತು ಸುಮಾರು 265 ಮೀಟರ್ ಗೋಡೆ ಇತ್ತು.</verse>
			</chapter>
			<chapter number="43">
				<verse number="1">ಆಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಬಾಗಿಲಿಗೆ ಕರೆದುಕೊಂಡು ಹೋದನು.</verse>
				<verse number="2">ಇಸ್ರಾಯೇಲಿನ ದೇವರ ಮಹಿಮೆಯು ಪೂರ್ವಮಾರ್ಗವಾಗಿ ಬಂದಿತು ಮತ್ತು ಅವರ ಧ್ವನಿಯು ಹರಿಯುವ ನೀರಿನ ಘರ್ಜನೆಯಂತಿತ್ತು; ಭೂಮಿಯು ಅವರ ಮಹಿಮೆಯಿಂದ ಪ್ರಕಾಶಿಸುತ್ತಿತ್ತು.</verse>
				<verse number="3">ನಾನು ಕಂಡ ದರ್ಶನವು, ಅವನು ಪಟ್ಟಣವನ್ನು ನಾಶಮಾಡಲು ಬಂದಾಗ ನಾನು ನೋಡಿದ ದೃಷ್ಟಿಯಂತೆ ಮತ್ತು ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ದರ್ಶನಗಳಂತೆ ಮತ್ತು ಆಗ ನಾನು ಬೋರಲು ಬಿದ್ದೆನು.</verse>
				<verse number="4">ಆಗ ಯೆಹೋವ ದೇವರ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿನ ಮಾರ್ಗವಾಗಿ ಆಲಯದೊಳಗೆ ಪ್ರವೇಶಿಸಿತು.</verse>
				<verse number="5">ಆಗ ಆತ್ಮವು ನನ್ನನ್ನು ಎತ್ತಿಕೊಂಡು ಒಳಗಿನ ಅಂಗಳಕ್ಕೆ ಕರೆತಂದಿತು. ಯೆಹೋವ ದೇವರ ಮಹಿಮೆಯಿಂದ ಆಲಯವು ತುಂಬಿಕೊಂಡಿತು.</verse>
				<verse number="6">ನಾನು ಆಲಯದೊಳಗಿಂದ ನನ್ನ ಸಂಗಡ ಮಾತನಾಡುವುದನ್ನು ಕೇಳಿದೆನು. ಆ ಪುರುಷನು ನನ್ನ ಬಳಿಯಲ್ಲಿಯೇ ನಿಂತಿದ್ದನು.</verse>
				<verse number="7">ಅವರು ನನಗೆ, “ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ನನ್ನ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲರ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಎಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರದಿಂದಲೂ ಅವರ ಅರಸರ ಮರಣದ ಸಮಯದಲ್ಲಿ ಅವರ ಅಂತ್ಯಕ್ರಿಯೆಯ ವಿಧಿಗಳ ಅರ್ಪಣೆಯಿಂದ ಅಪವಿತ್ರಗೊಳಿಸುವುದಿಲ್ಲ.</verse>
				<verse number="8">ಅವರು ತಮ್ಮ ಹೊಸ್ತಿಲನ್ನು ನನ್ನ ಹೊಸ್ತಿಲುಗಳ ಬಳಿಯಲ್ಲಿಯೂ ತಮ್ಮ ಕಂಬಗಳನ್ನು ನನ್ನ ಕಂಬಗಳ ಬಳಿಯಲ್ಲಿಯೂ ಇಟ್ಟು ನನಗೂ ಅವರಿಗೂ ಮಧ್ಯೆ ಗೋಡೆಯನ್ನು ಹಾಕಿದ್ದರಿಂದಲೂ ಅವರು ತಾವು ಮಾಡಿರುವ ಅಸಹ್ಯಗಳಿಂದ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡಿದ್ದಾರೆ. ಆದಕಾರಣ ನಾನು ನನ್ನ ಕೋಪದಲ್ಲಿ ಅವರನ್ನು ಮುಗಿಸಿಬಿಟ್ಟಿದ್ದೇನೆ.</verse>
				<verse number="9">ಈಗ ಅವರು ತಮ್ಮ ವ್ಯಭಿಚಾರವನ್ನು ಮತ್ತು ನಿಮ್ಮ ರಾಜರ ಅಂತ್ಯಕ್ರಿಯೆಯ ವಿಧಿಗಳನ್ನು ಬಿಟ್ಟುಬಿಡಿ, ನಾನು ಅವರ ಮಧ್ಯದಲ್ಲಿ ಎಂದೆಂದಿಗೂ ವಾಸಿಸುತ್ತೇನೆ.</verse>
				<verse number="10">“ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಈ ದೇವಾಲಯನ್ನು ವಿವರಿಸಿರಿ. ಅವರು ತಮ್ಮ ಅಕ್ರಮಗಳ ನಿಮಿತ್ತವಾಗಿ ನಾಚಿಕೆಪಡುವರು ಮತ್ತು ಅವರು ಅದರ ಪರಿಪೂರ್ಣತೆಯನ್ನು ಪರಿಗಣಿಸಲಿ.</verse>
				<verse number="11">ಅವರು ಮಾಡಿದ ಎಲ್ಲದಕ್ಕಾಗಿ ನಾಚಿಕೆಪಟ್ಟರೆ, ದೇವಾಲಯದ ರೂಪವನ್ನೂ, ಅದರ ಆಕಾರವನ್ನೂ, ಅದರ ಆಗಮನ ನಿರ್ಗಮನಗಳನ್ನೂ, ಅದರ ಎಲ್ಲಾ ನಿಯಮಗಳನ್ನೂ ಅದರ ಎಲ್ಲಾ ಕಟ್ಟಳೆಗಳನ್ನೂ ಅವರಿಗೆ ವಿವರಿಸು. ಅವರು ಅದರ ರಚನಾವಿಧಾನಗಳಿಗೆ ನಂಬಿಗಸ್ತರಾಗಿರುವಂತೆಯೂ ಅವರು ಅದರ ಎಲ್ಲಾ ಕಟ್ಟಳೆಗಳನ್ನೂ ಅನುಸರಿಸುವಂತೆಯೂ ಅವರ ಮುಂದೆಯೇ ಇವುಗಳನ್ನು ಬರೆ.</verse>
				<verse number="12">“ಇದು ಆ ಆಲಯದ ನಿಯಮವಾಗಿದೆ. ಆ ಪರ್ವತದ ಮೇಲೆಯೂ ಅದರ ಸುತ್ತಲೂ ನಿಗದಿ ಪಡಿಸಿದವರೆಗೂ ಎಲ್ಲವೂ ಅತ್ಯಂತ ಪರಿಶುದ್ಧವಾಗಿದೆ. ಇಗೋ, ಇದೇ ಆ ಆಲಯದ ನಿಯಮವಾಗಿದೆ.</verse>
				<verse number="13">“ಬಲಿಪೀಠವು ಮೀಟರ್ ಅಳತೆಯ ಪ್ರಕಾರ ಹೀಗಿರಬೇಕು. ಕೆಳಭಾಗದ ಎತ್ತರ ಐವತ್ತು ಸೆಂಟಿಮೀಟರ್, ಮೇಲಿನ ಬಿಡುವಿನ ಅಗಲವು ಸುತ್ತಲೂ ಐವತ್ತು ಸೆಂಟಿಮೀಟರ್, ಬಿಡುವಿನ ತುದಿಯಲ್ಲಿ ಸುತ್ತಣ ದಿಂಡಿನ ಅಗಲವು ಇಪ್ಪತ್ತೈದು ಸೆಂಟಿಮೀಟರ್;</verse>
				<verse number="14">ಕೆಳಭಾಗದ ಎತ್ತರವು ಒಂದು ಮೊಳ ಮೇಲಿನ ಕೈ ಅಗಲದಷ್ಟು ಅಂಚಿನ ಉದ್ದವು ಸುತ್ತಲೂ ಒಂದು ಮೊಳ, ಅಂಚಿನ ತುದಿಯಲ್ಲಿ ಸುತ್ತಲೂ ದಿಂಡಿನ ಅಗಲವು ಒಂದು ಮೊಳ. ಇದೇ ಬಲಿಪೀಠ. ನೆಲದ ಮೇಲೆ ಅಂದರೆ ಕೆಳಭಾಗದ ಮೇಲೆ ಕೆಳಗಿನ ಅಂತಸ್ತಿನ ಎತ್ತರವು ಎರಡು ಮೊಳ, ಅದರ ಮೇಲಣ ಬಿಡುವಿನ ಅಗಲ ಒಂದು ಮೊಳ. ಸಣ್ಣ ಅಂಚು ಮೊದಲುಗೊಂಡು ದೊಡ್ಡ ಅಂಚಿನವರೆಗೂ ನಾಲ್ಕು ಮೊಳ ಮತ್ತು ಅಗಲವು ಒಂದು ಮೊಳ.</verse>
				<verse number="15">ಅಗ್ನಿಕುಂಡದ ಅಂತಸ್ತಿನ ಎತ್ತರವು ಎರಡು ಮೀಟರ್ ಆ ಅಗ್ನಿಕುಂಡದ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು.</verse>
				<verse number="16">ಬಲಿಪೀಠದ ಉದ್ದವು ಹನ್ನೆರಡು ಮೊಳ, ಅಗಲ ಹನ್ನೆರಡು, ನಾಲ್ಕು ಕಡೆಯ ಚೌಕಗಳು ಚಚ್ಚೌಕವಾಗಿರಬೇಕು.</verse>
				<verse number="17">ಅದರ ಅಂಚು ನಾಲ್ಕು ಕಡೆಗೆ ಹದಿನಾಲ್ಕು ಮೊಳ ಉದ್ದವಾಗಿಯೂ, ಹದಿನಾಲ್ಕು ಮೊಳ ಅಗಲವಾಗಿಯೂ ಅದರ ಸುತ್ತಲಿರುವ ಮೇರೆಯು ಅರ್ಧ ಮೊಳವಾಗಿಯೂ ಅದರ ತಳವು ಒಂದು ಮೊಳವಾಗಿಯೂ ಇರಬೇಕು. ಅದರ ಮೆಟ್ಟಲುಗಳು ಪೂರ್ವದಿಕ್ಕಿಗೆ ಎದುರಾಗಿರಬೇಕು.”</verse>
				<verse number="18">ಅವರು ನನಗೆ ಹೇಳಿದ್ದೇನೆಂದರೆ: “ಮನುಷ್ಯಪುತ್ರನೇ, ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಬಲಿಪೀಠವನ್ನು ಮಾಡುವ ದಿನದಲ್ಲಿ ಅದರ ಮೇಲೆ ದಹನಬಲಿಗಳನ್ನು ಅರ್ಪಿಸಿ ರಕ್ತವನ್ನು ಚಿಮುಕಿಸಬೇಕು; ಇವು ಅಲ್ಲಿನ ನಿಯಮಗಳಾಗಿವೆ.</verse>
				<verse number="19">ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಸೇವೆ ಮಾಡುವುದಕ್ಕಾಗಿ ನನ್ನ ಬಳಿಗೆ ಸಮೀಪಿಸುವ ಚಾದೋಕನ ವಂಶದವರಾದ ಯಾಜಕರಿಗೂ ಲೇವಿಯರಿಗೂ ದೋಷಪರಿಹಾರ ಬಲಿಗಾಗಿ ಎಳೆಯ ಹೋರಿಯನ್ನು ಕೊಡಬೇಕು.</verse>
				<verse number="20">ಅದರ ರಕ್ತವನ್ನು ತೆಗೆದುಕೊಂಡು ಅದರ ನಾಲ್ಕು ಕೊಂಬುಗಳ ಅಂಚಿನ ನಾಲ್ಕು ಮೂಲೆಗಳಿಗೂ ಸುತ್ತಲೂ ಹಚ್ಚಿ ಬಲಿಪೀಠವನ್ನು ಶುದ್ಧೀಕರಿಸಿ ಮತ್ತು ಅದಕ್ಕೆ ಪ್ರಾಯಶ್ಚಿತ್ತವನ್ನು ಮಾಡಿರಿ.</verse>
				<verse number="21">ಇದಲ್ಲದೆ ನೀನು ಹೋರಿಯನ್ನೂ ಸಹ ದೋಷಪರಿಹಾರ ಬಲಿಗೆ ತೆಗೆದುಕೊಂಡು ಆಲಯದ ನೇಮಕವಾದ ಸ್ಥಳದಲ್ಲಿ, ಪರಿಶುದ್ಧ ಸ್ಥಳದಲ್ಲಿ ಹೊರಗೆ ಸುಡಬೇಕು.</verse>
				<verse number="22">“ಎರಡನೆಯ ದಿನದಲ್ಲಿ ದೋಷವಿಲ್ಲದ ಮೇಕೆಯ ಮರಿಯನ್ನೂ ದೋಷಪರಿಹಾರ ಬಲಿಯಾಗಿ ಅರ್ಪಿಸಬೇಕು. ಅವರು ಬಲಿಪೀಠವನ್ನು ಹೋರಿಯಿಂದ ಶುದ್ಧಮಾಡಿದ ಹಾಗೆ ಶುದ್ಧಮಾಡಬೇಕು.</verse>
				<verse number="23">ಹೀಗೆ ಅವರು ಶುದ್ಧಮಾಡಿದಾಗ ಕೊನೆಯಲ್ಲಿ ದೋಷವಿಲ್ಲದ ಒಂದು ಪ್ರಾಯದ ಹೋರಿಯನ್ನೂ ಪೂರ್ಣಾಂಗವಾದ ಮಂದೆಯೊಳಗಿರುವ ಒಂದು ಟಗರನ್ನೂ ಅರ್ಪಿಸಬೇಕು.</verse>
				<verse number="24">ನೀನು ಅವುಗಳನ್ನು ಯೆಹೋವ ದೇವರ ಮುಂದೆ ಅರ್ಪಿಸಬೇಕು. ಯಾಜಕರು ಅವುಗಳ ಮೇಲೆ ಉಪ್ಪನ್ನು ಹಾಕಿ ಅವುಗಳನ್ನು ಯೆಹೋವ ದೇವರಿಗೆ ದಹನಬಲಿಯಾಗಿ ಅರ್ಪಿಸಬೇಕು.</verse>
				<verse number="25">“ಏಳು ದಿನಗಳ ತನಕ ಪ್ರತಿದಿನವೂ ನೀನು ದೋಷಪರಿಹಾರ ಬಲಿಗಾಗಿ ಮೇಕೆಯನ್ನು ಸಿದ್ಧಮಾಡಬೇಕು ಮತ್ತು ಪೂರ್ಣಾಂಗವಾದ ಪ್ರಾಯದ ಹೋರಿಯನ್ನೂ ಮಂದೆಯೊಳಗಿನ ಟಗರನ್ನೂ ಸಿದ್ಧಮಾಡಬೇಕು.</verse>
				<verse number="26">ಏಳು ದಿನಗಳ ತನಕ ಅವರು ಬಲಿಪೀಠವನ್ನು ಶುದ್ಧಮಾಡಿ ತಮ್ಮನ್ನು ತಾವೇ ಪ್ರತಿಷ್ಠಿಸಿಕೊಳ್ಳಬೇಕು.</verse>
				<verse number="27">ಈ ದಿನಗಳು ತೀರಿದಾಗ ಎಂಟನೆಯ ದಿನದ ತರುವಾಯ ಯಾಜಕರು ಬಲಿಪೀಠದ ಮೇಲೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಸಮಾಧಾನದ ಬಲಿಗಳನ್ನೂ ಕೊಡುವರು. ಆಗ ನಾನು ನಿಮ್ಮನ್ನು ಅಂಗೀಕರಿಸುವೆನೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”</verse>
			</chapter>
			<chapter number="44">
				<verse number="1">ಆಮೇಲೆ ಅವನು ನನ್ನನ್ನು ಪೂರ್ವದಿಕ್ಕಿಗೆ ಅಭಿಮುಖವಾದ ಹೊರಗಿನ ಪರಿಶುದ್ಧಸ್ಥಳದ ಬಾಗಿಲಿನ ಮಾರ್ಗವಾಗಿ ಮತ್ತೆ ಬರಮಾಡಿದನು. ಅದು ಮುಚ್ಚಿತ್ತು.</verse>
				<verse number="2">ಆಮೇಲೆ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಈ ಬಾಗಿಲು ಮುಚ್ಚೇ ಇರಬೇಕು. ಇದು ತೆರೆಯಬಾರದು. ಯಾವ ಮನುಷ್ಯನೂ ಇದರಿಂದ ಪ್ರವೇಶಿಸಬಾರದು. ಏಕೆಂದರೆ ಇಸ್ರಾಯೇಲರ ಯೆಹೋವ ದೇವರು ಇದರಿಂದ ಪ್ರವೇಶಿಸಿದ್ದಾರೆ. ಆದ್ದರಿಂದ ಇದು ಮುಚ್ಚಿರಬೇಕು.</verse>
				<verse number="3">ಇದು ಪ್ರಭುವಿಗಾಗಿ ಇದೆ; ಪ್ರಭುವು ಅವರೊಳಗೆ ಕುಳಿತುಕೊಂಡು, ಯೆಹೋವ ದೇವರ ಮುಂದೆ ರೊಟ್ಟಿಯನ್ನು ತಿನ್ನಬೇಕು. ಆತನು ಆ ಬಾಗಿಲಿನ ಪಡಸಾಲೆಯ ಮೂಲಕ ಪ್ರವೇಶಿಸಿ ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.”</verse>
				<verse number="4">ಆಮೇಲೆ ಅವನು ನನ್ನನ್ನು ಉತ್ತರದ ಬಾಗಿಲಿನ ಮಾರ್ಗವಾಗಿ ಆಲಯದ ಮುಂದೆ ಕರೆದುಕೊಂಡು ಹೋದನು. ನಾನು ನೋಡಿದೆ ಯೆಹೋವ ದೇವರ ಮಹಿಮೆಯು ಯೆಹೋವ ದೇವರ ಆಲಯವನ್ನು ತುಂಬಿಕೊಂಡಿತು, ನಾನು ಬೋರಲು ಬಿದ್ದೆನು.</verse>
				<verse number="5">ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ಯೆಹೋವ ದೇವರ ಆಲಯದ ಸಕಲ ನೇಮನಿಷ್ಠೆಗಳ ವಿಷಯವಾಗಿಯೂ ನಿಯಮದ ವಿಷಯವಾಗಿಯೂ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು ಮನದಟ್ಟು ಮಾಡಿಕೋ. ಆಲಯದೊಳಗಿನ ಪ್ರವೇಶವನ್ನೂ ಪರಿಶುದ್ಧಸ್ಥಳದ ಪ್ರತಿಯೊಂದು ಹಾದುಹೋಗುಗಳನ್ನೂ ಗಮನಿಸು.</verse>
				<verse number="6">ತಿರುಗಿಬೀಳುವ ಇಸ್ರಾಯೇಲನ ಮನೆತನದವರಿಗೆ ನೀನು ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ಎಲ್ಲಾ ಅಸಹ್ಯಗಳನ್ನು ಸಾಕುಮಾಡಿರಿ.</verse>
				<verse number="7">ಅವುಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿಗೋಸ್ಕರ ನನ್ನ ಒಡಂಬಡಿಕೆಯನ್ನು ಮೀರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧ ಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ.</verse>
				<verse number="8">ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ, ಬದಲಿಗೆ ಅನ್ಯದೇಶೀಯರನ್ನು ನನ್ನ ಪರಿಶುದ್ಧ ಸ್ಥಳದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇಮಿಸಿದಿರಿ.</verse>
				<verse number="9">ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದ ಯಾವೊಬ್ಬ ಪರಕೀಯನೂ ಇಸ್ರಾಯೇಲರೊಳಗಿರುವ ಯಾವೊಬ್ಬ ಅಪರಿಚಿತನೂ ನನ್ನ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಬಾರದು.</verse>
				<verse number="10">“ ‘ಇಸ್ರಾಯೇಲರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರೂ ಸಹ ತಮ್ಮ ಪಾಪಗಳನ್ನು ಹೊರುವರು.</verse>
				<verse number="11">ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿಸುವವರಾಗಿರುವರು. ಆಲಯದ ಬಾಗಿಲುಗಳ ಮೇಲ್ವಿಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು. ಅವರು ಜನರಿಗೋಸ್ಕರ ದಹನಬಲಿಯನ್ನೂ ಸಮಾಧಾನ ಬಲಿಯನ್ನೂ ಮಾಡಿ ಅವರಿಗೆ ಸೇವೆ ಮಾಡುವ ಹಾಗೆ ಅವರ ಮುಂದೆ ನಿಲ್ಲುವರು.</verse>
				<verse number="12">ಆದರೆ ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆಮಾಡಿ ಇಸ್ರಾಯೇಲಿನ ಮನೆತನದವರಿಗೆ ಪಾಪದ ಆತಂಕವಾದದ್ದರಿಂದ, ನಾನು ಅವರಿಗೆ ವಿರುದ್ಧವಾಗಿ ನನ್ನ ಕೈಯನ್ನು ಚಾಚಿದ್ದೇನೆ. ಅವರು ತಮ್ಮ ಪಾಪವನ್ನು ಹೊರುವರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="13">ಅವರು ಯಾಜಕರಾಗಿ ನನ್ನನ್ನು ಸಮೀಪಿಸದೆ ಮಹಾಪರಿಶುದ್ಧ ಸ್ಥಳದಲ್ಲಿ ನನ್ನ ಪರಿಶುದ್ಧವಾದವುಗಳಲ್ಲಿ ಒಂದನ್ನಾದರೂ ಸಮೀಪಿಸದೆ, ತಮ್ಮ ನಾಚಿಕೆಯನ್ನೂ ತಾವು ಮಾಡಿದ ಅಸಹ್ಯಗಳನ್ನೂ ಹೊರುವರು.</verse>
				<verse number="14">ಆದರೆ ನಾನು ಅವರನ್ನು ಆಲಯದ ಎಲ್ಲಾ ಸೇವೆಗೋಸ್ಕರವೂ ಅದರಲ್ಲಿ ಮಾಡುವಂತಹ ಎಲ್ಲವುಗಳಿಗೋಸ್ಕರವೂ ಆಲಯದ ಕಾರ್ಯಗಳನ್ನು ನೋಡಿಕೊಳ್ಳುವವರನ್ನಾಗಿ ಮಾಡುವೆನು.</verse>
				<verse number="15">“ ‘ಆದರೆ ಇಸ್ರಾಯೇಲರು ನನ್ನನ್ನು ಬಿಟ್ಟುಹೋದಾಗ ನನ್ನ ಪರಿಶುದ್ಧಸ್ಥಳದ ಕಾಯಿದೆಯನ್ನು ಪಾಲಿಸಿದ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವಂತೆ ನನ್ನ ಸಮೀಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="16">ಇವರು ಮಾತ್ರ ನನ್ನ ಪರಿಶುದ್ಧ ಸ್ಥಳವನ್ನು ಪ್ರವೇಶಿಸಿ, ಇವರು ಮಾತ್ರ ನನಗೆ ಸೇವೆ ಮಾಡುವುದಕ್ಕಾಗಿ ನನ್ನ ಮೇಜಿನ ಬಳಿಗೆ ಬರುವರು ಮತ್ತು ನನಗೆ ಕಾವಲುಗಾರರಾಗಿ ಸೇವೆ ಸಲ್ಲಿಸಬೇಕು.</verse>
				<verse number="17">“ ‘ಅವರು ಒಳಗಿನ ಅಂಗಳಗಳ ಬಾಗಿಲನ್ನು ಪ್ರವೇಶಿಸುವಾಗ ನಾರಿನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಅವರು ಒಳಗಿನ ಅಂಗಳದ ಬಾಗಿಲುಗಳಲ್ಲಿಯೂ ಒಳಗಡೆಯೂ ಸೇವಿಸುತ್ತಿರುವಾಗ ಅವರ ಮೇಲೆ ಉಣ್ಣೆಯ ಉಡುಪೂ ಇರಕೂಡದು.</verse>
				<verse number="18">ಅವರ ತಲೆಗಳ ಮೇಲೆ ನಾರಿನ ಮುಂಡಾಸಗಳೂ, ಅವರ ಸೊಂಟಗಳ ಮೇಲೆ ನಾರಿನ ಒಳಉಡುಪುಗಳೂ ಇರಬೇಕು. ಅವರು ಬೆವರು ಬರುವಂಥವುಗಳನ್ನು ಕಟ್ಟಿಕೊಳ್ಳಬಾರದು.</verse>
				<verse number="19">ಇದಲ್ಲದೆ ಅವರು ಹೊರಗಿನ ಅಂಗಳಕ್ಕೆ ತೀರಾ ಹೊರಗಿನ ಅಂಗಳಕ್ಕೆ ಜನರ ಬಳಿಗೆ ಹೋಗುವಾಗ ತಾವು ಸೇವೆಮಾಡಿದ ತಮ್ಮ ವಸ್ತ್ರಗಳನ್ನು ತೆಗೆದು ಪರಿಶುದ್ಧ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ತಮ್ಮ ವಸ್ತ್ರಗಳಿಂದ ಜನರನ್ನು ಪರಿಶುದ್ಧಗೊಳಿಸಬಾರದು.</verse>
				<verse number="20">“ ‘ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳದೆ ಉದ್ದಕೂದಲನ್ನು ಬೆಳೆಸದೆ ತಮ್ಮ ತಲೆ ಕೂದಲುಗಳನ್ನು ಕತ್ತರಿಸಬೇಕು.</verse>
				<verse number="21">ಯಾವ ಯಾಜಕನೇ ಆಗಲಿ, ಒಳಗಿನ ಅಂಗಳದಲ್ಲಿ ಪ್ರವೇಶಿಸುವಾಗ ದ್ರಾಕ್ಷಾರಸವನ್ನು ಕುಡಿಯಬಾರದು.</verse>
				<verse number="22">ಯಾಜಕರು ವಿಧವೆಯನ್ನಾಗಲಿ ಗಂಡನಿಂದ ಬಿಡಲಾದವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಾಯೇಲ್ ಸಂತಾನದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆಮಾಡಿಕೊಳ್ಳಲಿ.</verse>
				<verse number="23">ಅವರು ನನ್ನ ಜನರಿಗೆ ಪರಿಶುದ್ಧವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಇರುವ ವ್ಯತ್ಯಾಸವನ್ನು ಬೋಧಿಸಿ, ಅವರಿಗೆ ಶುದ್ಧಾಶುದ್ಧ ವ್ಯತ್ಯಾಸವನ್ನೂ ವಿವರಿಸಬೇಕು.</verse>
				<verse number="24">“ ‘ವ್ಯಾಜ್ಯವಾಗುವಾಗ ಅದನ್ನು ತೀರಿಸಲು ಯಾಜಕರು ನನ್ನ ನ್ಯಾಯಾನುಸಾರವಾಗಿ ನ್ಯಾಯಾಧಿಪತಿಗಳಾಗಿ ನ್ಯಾಯತೀರಿಸಲಿ. ಅವರು ನನ್ನ ತೀರ್ಪುಗಳನ್ನೂ, ನನ್ನ ನಿಯಮಗಳನ್ನೂ ನಾನು ನೇಮಿಸಿದ ಹಬ್ಬಗಳಲ್ಲಿಯೂ ನನ್ನ ಸಬ್ಬತ್ ದಿನಗಳಲ್ಲಿಯೂ ಪರಿಶುದ್ಧವಾಗಿ ಪಾಲಿಸಬೇಕು.</verse>
				<verse number="25">“ ‘ಯಾಜಕರು ಸತ್ತ ಮನುಷ್ಯರ ಬಳಿಗೆ ಬಂದು ಅಶುದ್ಧರಾಗಬಾರದು. ಆದರೆ ತಂದೆತಾಯಿ, ಮಗ, ಮಗಳು, ಸಹೋದರ, ಗಂಡನಿಲ್ಲದ ಸಹೋದರಿ, ಇವರಿಗೋಸ್ಕರ ಅವರು ಅಶುದ್ಧರಾಗಬಹುದು.</verse>
				<verse number="26">ಅವನು ಶುದ್ಧನಾದ ಮೇಲೆ ಅವನಿಗೆ ಏಳು ದಿವಸಗಳನ್ನು ಪ್ರತ್ಯೇಕಿಸಬೇಕು.</verse>
				<verse number="27">ಅವನು ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವುದಕ್ಕೋಸ್ಕರ ಒಳಗಿನ ಅಂಗಳದ ಪರಿಶುದ್ಧ ಸ್ಥಳಕ್ಕೆ ಬರುವ ದಿನದಲ್ಲಿ ತನ್ನ ಪಾಪ ಪರಿಹಾರಕ ಬಲಿಯನ್ನು ಅರ್ಪಿಸಬೇಕೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="28">“ ‘ಅದು ಅವರಿಗೆ ಬಾಧ್ಯತೆಯಾಗಿರುವುದು; ನಾನೇ ಅವರಿಗೆ ಬಾಧ್ಯನಾಗಿರುವೆನು. ನೀವು ಇಸ್ರಾಯೇಲಿನಲ್ಲಿ ಅವರಿಗೆ ಸ್ವಾಸ್ತ್ಯವನ್ನು ಕೊಡಬಾರದು. ಏಕೆಂದರೆ ನಾನೇ ಅವರಿಗೆ ಸ್ವಾಸ್ತ್ಯವಾಗಿರುವೆನು.</verse>
				<verse number="29">ಧಾನ್ಯ ಸಮರ್ಪಣೆಯನ್ನು ದೋಷಪರಿಹಾರ ಬಲಿಯನ್ನೂ ಪ್ರಾಯಶ್ಚಿತ್ತ ಬಲಿಯನ್ನೂ ಅವರು ತಿನ್ನಬೇಕು. ಇಸ್ರಾಯೇಲಿನಲ್ಲಿ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದ್ದೆಲ್ಲವೂ ಅವರಿಗೆ ಸಲ್ಲಬೇಕು.</verse>
				<verse number="30">ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟವಾದದ್ದೂ ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕನದ್ದಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ನೀವು ಯಾಜಕರಿಗೆ ಕೊಡತಕ್ಕದ್ದು.</verse>
				<verse number="31">ಯಾಜಕರು ತಾನಾಗಿ ಸತ್ತುಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲಾದ ಪಕ್ಷಿಯನ್ನಾಗಲಿ, ಪ್ರಾಣಿಯನ್ನಾಗಲಿ ತಿನ್ನಬಾರದು.</verse>
			</chapter>
			<chapter number="45">
				<verse number="1">“ ‘ಇದಲ್ಲದೆ ನೀವು ದೇಶವನ್ನು ಚೀಟುಹಾಕಿ ಸೊತ್ತಾಗಿ ಹಂಚುವಾಗ, ಒಂದು ಪರಿಶುದ್ಧ ಭಾಗವನ್ನು ಪ್ರತ್ಯೇಕಿಸಿ, ಯೆಹೋವ ದೇವರಿಗೆ ಕಾಣಿಕೆಯಾಗಿ ಕೊಡಬೇಕು. ಅದು ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಹತ್ತು ಸಾವಿರ ಮೊಳ ಅಗಲವಾಗಿಯೂ ಇರಲಿ. ಇದು ಅದರ ಎಲ್ಲಾ ಮೇರೆಗಳಲ್ಲಿ ಸುತ್ತಲಾಗಿ ಪರಿಶುದ್ಧವಾಗಿರಲಿ.</verse>
				<verse number="2">ಇಲ್ಲಿ ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವುದು. ಮತ್ತು ಅದರ ಸುತ್ತಲೂ ಸುಮಾರು ಇಪ್ಪತ್ತಾರು ಮೀಟರ್ ತೆರೆದ ಭೂಮಿ ಇರಬೇಕು. ಇರುವುದು.</verse>
				<verse number="3">ಈ ಅಳತೆಯು, ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಮತ್ತು ಹತ್ತು ಸಾವಿರ ಮೊಳ ಅಗಲವಾಗಿಯೂ ಇರುವಂತೆ ನೀನು ಅಳೆಯಬೇಕು ಮತ್ತು ಪರಿಶುದ್ಧ ಸ್ಥಳವೂ ಅತಿ ಶುದ್ಧವಾದದ್ದೂ ಇರಬೇಕು; ಪರಿಶುದ್ಧವಾದ ಜಾಗವೂ ಆಗಿರಬೇಕು.</verse>
				<verse number="4">ದೇಶದ ಪರಿಶುದ್ಧ ಭಾಗವು ಯೆಹೋವ ದೇವರಿಗೆ ಸೇವೆ ಮಾಡಲು ಸಮೀಪಿಸುವಂತೆ, ಪರಿಶುದ್ಧಸ್ಥಳದ ಸೇವಕರಾದಂಥ ಯಾಜಕರದಾಗಿರಬೇಕು. ಅದು ಅವರ ಮನೆಗಳಿಗೆ ಸ್ಥಳವಾಗಿಯೂ ಪರಿಶುದ್ಧ ಸ್ಥಳಕ್ಕೆ ಪರಿಶುದ್ಧ ಜಾಗವಾಗಿಯೂ ಇರಬೇಕು.</verse>
				<verse number="5">ಇಪ್ಪತ್ತೈದು ಸಾವಿರ ಮೊಳ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಲಯದಲ್ಲಿ ಸೇವೆ ಮಾಡುವ ಲೇವಿಯರಿಗೆ ತಮಗೆ ಸೊತ್ತಾಗಿ ಇಪ್ಪತ್ತು ಕೊಠಡಿಗಳಿಗಾಗಿ ಇರಬೇಕು.</verse>
				<verse number="6">“ ‘ನೀವು ಪಟ್ಟಣದ ಸೊತ್ತನ್ನು ಕಾಣಿಕೆಯಾದ ಪರಿಶುದ್ಧಭಾಗಕ್ಕೆ ಎದುರಾಗಿ ಐದು ಸಾವಿರ ಮೊಳ ಅಗಲವಾಗಿಯೂ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ನೇಮಿಸಬೇಕು. ಇದು ಸಮಸ್ತ ಇಸ್ರಾಯೇಲಿನ ಮನೆತನದವರಿಗೋಸ್ಕರ ಇರುವುದು.</verse>
				<verse number="7">“ ‘ಕಾಣಿಕೆಯಾದ ಪರಿಶುದ್ಧಭಾಗದ ಮುಂದೆಯೂ ಪಟ್ಟಣದ ಸೊತ್ತಿನ ಮುಂದೆಯೂ ಅದರ ಪಶ್ಚಿಮದ ಕಡೆಯಲ್ಲಿ ಪಶ್ಚಿಮಕ್ಕೂ ಅದರ ಪೂರ್ವದ ಕಡೆಯಲ್ಲಿ ಪೂರ್ವಕ್ಕೂ ಪ್ರಭುವಿಗೆ ಪಾಲು ಇರಬೇಕು. ಅದರ ಉದ್ದವು ಭಾಗಗಳಲ್ಲಿ ಒಂದಕ್ಕೆ ಎದುರಾಗಿ, ಪಶ್ಚಿಮ ಮೇರೆ ಮೊದಲುಗೊಂಡು ಪೂರ್ವ ಮೇರೆಯ ತನಕ ಒಂದು ಗೋತ್ರದ ಸ್ವಾಸ್ತ್ಯದ ಉದ್ದಕ್ಕೆ ಸರಿಸಮಾನವಾಗಿರುವುದು.</verse>
				<verse number="8">ಈ ಭೂಮಿಯು ಅವನಿಗೆ ಇಸ್ರಾಯೇಲಿನಲ್ಲಿ ಸೊತ್ತಾಗಿರುವುದು. ಆಗ ನನ್ನ ಪ್ರಭುಗಳು ನನ್ನ ಜನರನ್ನು ಉಪದ್ರವ ಪಡಿಸುವುದೇ ಇಲ್ಲ. ಉಳಿದ ಭೂಮಿಯನ್ನು ಇಸ್ರಾಯೇಲಿನ ಮನೆತನದವರಿಗೆ ಅವರ ಗೋತ್ರಗಳ ಅನುಸಾರವಾಗಿ ಕೊಡಲಾಗುವುದು.</verse>
				<verse number="9">“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಪ್ರಭುಗಳೇ, ನೀವು ಸಾಕುಮಾಡಿರಿ, ಬಲಾತ್ಕಾರವನ್ನೂ ಸುಲಿಗೆಯನ್ನೂ ಬಿಡಿರಿ. ನ್ಯಾಯವನ್ನೂ ನೀತಿಯನ್ನೂ ನಡೆಸಿರಿ. ನನ್ನ ಜನರನ್ನು ಓಡಿಸಬೇಡಿರಿ ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="10">ನ್ಯಾಯವಾದ ತಕ್ಕಡಿಯೂ ನ್ಯಾಯವಾದ ಎಫಾವೂ ನ್ಯಾಯವಾದ ಬಾತ್ ಅಳತೆಯೂ ನಿಮಗಿರಬೇಕು.</verse>
				<verse number="11">ಎಫಾ ಎಂಬ ಧಾನ್ಯದ ಅಳತೆ ಮತ್ತು ಬತ್ ಎಂಬ ರಸದ್ರವ್ಯದ ಅಳತೆ ಒಂದೇ ಪ್ರಮಾಣವಾಗಿರಬೇಕು; ಬತ್ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು, ಎಫಾ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು; ಈ ಹೋಮೆರ್ ಎರಡಕ್ಕೂ ಪ್ರಮಾಣಿತ ಅಳತೆಗೆ ಸಂಬಂಧವಾಗಿರಬೇಕು.</verse>
				<verse number="12">ಒಂದು ಶೆಕೆಲ್ ಇಪ್ಪತ್ತು ಗೇರಾ ತೂಕವಾಗಿರಬೇಕು. ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು ಶೇಕೆಲು, ಇಪ್ಪತ್ತೈದು ಶೇಕೆಲು ಅಥವಾ ಹದಿನೈದು ಶೆಕೆಲ್ ತೂಕದ್ದಾಗಿರಲಿ.</verse>
				<verse number="13">“ ‘ಇದು ಸಮರ್ಪಿಸಬೇಕಾದ ವಿಶೇಷ ಕಾಣಿಕೆ: ನೀವು ಜವೆಗೋಧಿಯ ಓಮೆರಿನಲ್ಲಿ ಏಫದ ಆರನೆಯ ಪಾಲನ್ನು ಕಾಣಿಕೆಯಾಗಿ ಕೊಡಬೇಕು.</verse>
				<verse number="14">ಒಂದು ಬಾತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗ, ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಎಫಾ ಅಳತೆಯ ಆರನೆಯ ಒಂದು ಪಾಲು; ಒಂದು ಬಾತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗವೆಷ್ಟೆಂದರೆ, ಒಂದು ಕೋರ್ ಅಂದರೆ, ಹತ್ತು ಬಾತ್ ಅಥವಾ ಒಂದು ಹೋಮೆರ್ ಅಳತೆಯ ಎಣ್ಣೆಯಲ್ಲಿ ಒಂದು ಬಾತ್ ಅಳತೆಯ ಹತ್ತನೆಯ ಒಂದು ಪಾಲು; ಏಕೆಂದರೆ ಹತ್ತು ಬಾತ್ ಒಂದೇ ಓಮೆರ್.</verse>
				<verse number="15">ಇಸ್ರಾಯೇಲಿನ ನೀರಿರುವ ಹುಲ್ಲುಗಾವಲುಗಳಿಂದ ಇನ್ನೂರು ಮಂದಿಯ ಹಿಂಡಿನಿಂದ ಒಂದು ಕುರಿಯನ್ನು ತೆಗೆದುಕೊಳ್ಳಬೇಕು. ಇವುಗಳನ್ನು ಜನರಿಗಾಗಿ ಪ್ರಾಯಶ್ಚಿತ್ತವನ್ನು ಮಾಡಲು ಧಾನ್ಯಯಜ್ಞಗಳು, ದಹನಬಲಿಗಳು ಮತ್ತು ಸಮಾಧಾನದ ಅರ್ಪಣೆಗಳಿಗಾಗಿ ಬಳಸಲಾಗುವುದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="16">ದೇಶದಲ್ಲಿರುವ ಜನರೆಲ್ಲರೂ ಈ ಕಾಣಿಕೆಯನ್ನು ಇಸ್ರಾಯೇಲನ ಪ್ರಭುವಿಗಾಗಿ ಕೊಡಬೇಕು.</verse>
				<verse number="17">ಹಬ್ಬಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ವಿಶ್ರಾಂತಿಯ ದಿನಗಳಲ್ಲಿಯೂ ಇಸ್ರಾಯೇಲಿನ ಮನೆತನದವರ ಎಲ್ಲಾ ಸಭೆಗಳಲ್ಲಿಯೂ ಹೋಮಗಳನ್ನು ಅರ್ಪಣೆಗಳನ್ನು ನೈವೇದ್ಯಗಳನ್ನು ಕೊಡುವುದು ಪ್ರಭುವಿನ ಕೆಲಸವಾಗಿರುವುದು. ಆತನು ಇಸ್ರಾಯೇಲ್ಯರಿಗೆ ಪ್ರಾಯಶ್ಚಿತ್ತ ಮಾಡಲು ಪಾಪ ಪರಿಹಾರಕ ಬಲಿಗಳನ್ನು, ಧಾನ್ಯದ ಅರ್ಪಣೆಗಳನ್ನು, ದಹನಬಲಿಗಳನ್ನು ಮತ್ತು ಸಮಾಧಾನದ ಬಲಿಗಳನ್ನು ಒದಗಿಸುವನು.</verse>
				<verse number="18">“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಪೂರ್ಣಾಂಗವಾದ ಒಂದು ಎಳೆಯ ಹೋರಿಯನ್ನು ತೆಗೆದುಕೊಂಡು ಪರಿಶುದ್ಧ ಸ್ಥಳವನ್ನು ಶುದ್ಧಮಾಡಬೇಕು.</verse>
				<verse number="19">ಯಾಜಕನು ದೋಷಪರಿಹಾರ ಬಲಿಯ ರಕ್ತವನ್ನು ತೆಗೆದುಕೊಂಡು ಬಲಿಪೀಠದ ಅಂಚಿನ ನಾಲ್ಕು ಮೂಲೆಗಳಿಗೂ ಒಳಗಿನ ಅಂಗಳದ ಬಾಗಿಲಿನ ಅಂಚಿಗೆ ಹಚ್ಚಬೇಕು;</verse>
				<verse number="20">ತಿಳಿಯದೆ ಅಥವಾ ಅಜ್ಞಾನದಿಂದ ಪಾಪಮಾಡುವ ಪ್ರತಿಯೊಬ್ಬರಿಗೂ ತಿಂಗಳ ಏಳನೇ ದಿನದಲ್ಲಿ ನೀವು ಅದೇ ರೀತಿ ಮಾಡಬೇಕು; ಈ ರೀತಿಯಾಗಿ ನೀವು ದೇವಾಲಯಕ್ಕೆ ಪ್ರಾಯಶ್ಚಿತ್ತವನ್ನು ಮಾಡಬೇಕು.</verse>
				<verse number="21">“ ‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ನಿಮಗೆ ಏಳು ದಿನಗಳ ಹಬ್ಬವಾಗಿರುವ ಪಸ್ಕಹಬ್ಬವು ಇರಬೇಕು. ಅದರಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.</verse>
				<verse number="22">ಆ ದಿನದಲ್ಲಿ ಪ್ರಭುವು ತನಗಾಗಿಯೂ ದೇಶದ ಎಲ್ಲಾ ಜನರಿಗಾಗಿಯೂ ದೋಷಪರಿಹಾರ ಬಲಿಗಾಗಿ ಹೋರಿಯನ್ನು ಸಿದ್ಧಮಾಡಬೇಕು.</verse>
				<verse number="23">ಹಬ್ಬದ ಏಳು ದಿವಸಗಳಲ್ಲಿ ಪ್ರತಿದಿನವೂ ಅವನು ಯೆಹೋವ ದೇವರಿಗೆ ದಹನಬಲಿಗಾಗಿ ಪೂರ್ಣಾಂಗವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಮತ್ತು ಪ್ರತಿದಿನವೂ ದೋಷಪರಿಹಾರ ಬಲಿಗಾಗಿ ಮೇಕೆಯ ಮರಿಯನ್ನೂ ಸಿದ್ಧಮಾಡಬೇಕು.</verse>
				<verse number="24">ಅವನು ಒಂದೊಂದು ಹೋರಿಗೆ ಮತ್ತು ಟಗರಿಗೆ ಐದು ಕಿಲೋಗ್ರಾಂ ಗೋಧಿಹಿಟ್ಟನ್ನೂ ಸುಮಾರು ಮೂರುವರೆ ಲೀಟರ್ ಎಣ್ಣೆಯನ್ನು ಧಾನ್ಯ ಸಮರ್ಪಣೆಯಾಗಿ ಅರ್ಪಿಸಬೇಕು.</verse>
				<verse number="25">“ ‘ಏಕೆಂದರೆ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿವಸಗಳಲ್ಲಿಯೂ ಅವನು ದೋಷಪರಿಹಾರಕ ಬಲಿಪ್ರಾಣಿ, ದಹನಬಲಿಪ್ರಾಣಿ, ಧಾನ್ಯ ಸಮರ್ಪಣೆ, ಎಣ್ಣೆ ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.</verse>
			</chapter>
			<chapter number="46">
				<verse number="1">“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಒಳಗಿನ ಅಂಗಳದ ಪೂರ್ವದಿಕ್ಕಿನ ಎದುರಾಗಿರುವ ಬಾಗಿಲು ಕೆಲಸ ನಡೆಯುವ ಆರು ದಿವಸಗಳಲ್ಲಿ ಮುಚ್ಚಲಾಗಬೇಕು. ಆದರೆ ಸಬ್ಬತ್ ದಿನದಲ್ಲಿ ಅದು ತೆರೆದಿರಬೇಕು. ಅಮಾವಾಸ್ಯೆಯ ದಿನದಲ್ಲೂ ಅದು ತೆರೆದಿರಬೇಕು.</verse>
				<verse number="2">ರಾಜಕುಮಾರನು ಆ ಬಾಗಿಲಿನ ದ್ವಾರಮಂಟಪ ಮಾರ್ಗವಾಗಿ ಹೊರಗಿನಿಂದ ಪ್ರವೇಶಿಸಿ ಬಾಗಿಲಿನ ಕಂಬದ ಬಳಿಯಲ್ಲಿ ನಿಲ್ಲಬೇಕು. ಆಗ ಯಾಜಕರು ಅವನ ದಹನಬಲಿಯನ್ನು ಅವನ ಸಮಾಧಾನದ ಬಲಿಗಳನ್ನು ಸಿದ್ಧಮಾಡಬೇಕು. ಬಾಗಿಲಿನ ಹೊಸ್ತಿಲಲ್ಲಿ ಆರಾಧಿಸಿ ಹೋಗಬೇಕು. ಆದರೆ ಬಾಗಿಲು ಸಂಜೆಯವರೆಗೂ ಮುಚ್ಚದಿರಬೇಕು.</verse>
				<verse number="3">ದೇಶದ ಜನರು ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಈ ಬಾಗಿಲಿನ ಕದದ ಹತ್ತಿರ ಯೆಹೋವ ದೇವರ ಮುಂದೆ ಇದೇ ರೀತಿ ಆರಾಧಿಸಬೇಕು.</verse>
				<verse number="4">ರಾಜಕುಮಾರನು ಯೆಹೋವ ದೇವರಿಗೆ ಸಬ್ಬತ್ ದಿನದಲ್ಲಿ ಪೂರ್ಣಾಂಗವಾದ ಆರು ಕುರಿಮರಿಗಳು, ಪೂರ್ಣಾಂಗವಾದ ಒಂದು ಟಗರು ದಹನಬಲಿಯಾಗಿ ಅರ್ಪಿಸಬೇಕು.</verse>
				<verse number="5">ಟಗರಿನ ಜೊತೆಗೆ ಕೊಡುವ ಧಾನ್ಯ ಸಮರ್ಪಣೆಯು ಸುಮಾರು ಹದಿನಾರು ಕಿಲೋಗ್ರಾಂ ಆಗಿರಬೇಕು ಮತ್ತು ಕುರಿಮರಿಗಳ ಜೊತೆಗೆ ಕೊಡುವ ಧಾನ್ಯ ಸಮರ್ಪಣೆಯು ಅವನ ಕೈಲಾದಷ್ಟು ಆಗಿರಬೇಕು. ಇದರ ಜೊತೆಗೆ ಪ್ರತಿ ಎಫಾ ಪ್ರಮಾಣದ ಧಾನ್ಯ ಸಮರ್ಪಣೆಯಾಗಿ ಸುಮಾರು ಮೂರುವರೆ ಲೀಟರ್ ಎಣ್ಣೆಯನ್ನು ಅರ್ಪಿಸಬೇಕು.</verse>
				<verse number="6">ಅಮಾವಾಸ್ಯೆಯ ದಿನದಲ್ಲಿ ಪೂರ್ಣಾಂಗವಾದ ಒಂದು ಎಳೆಯ ಹೋರಿ, ಆರು ಕುರಿಮರಿಗಳು, ಒಂದು ಟಗರನ್ನು ಅರ್ಪಿಸಬೇಕು. ಇವು ದೋಷವಿಲ್ಲದ್ದಾಗಿರಬೇಕು.</verse>
				<verse number="7">ಅವನು ಹೋರಿಗೆ ಒಂದು ಎಫವನ್ನೂ ಟಗರಿಗೆ ಒಂದು ಎಫವನ್ನೂ ಮತ್ತು ಕುರಿಮರಿಗೆ ಅವನ ಕೈಲಾಗುವಷ್ಟನ್ನು ಎಫ ಒಂದಕ್ಕೆ ಎಣ್ಣೆಯ ಒಂದು ಹಿನ್ನಿನ ಜೊತೆಗೆ ಅವನು ಧಾನ್ಯ ಸಮರ್ಪಣೆಗಾಗಿ ಸಿದ್ಧಮಾಡಬೇಕು.</verse>
				<verse number="8">ರಾಜಕುಮಾರನು ಪ್ರವೇಶಿಸುವಾಗ, ಅವನು ಬಾಗಿಲಿನ ದ್ವಾರಮಂಟಪದ ಪ್ರಕಾರವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು.</verse>
				<verse number="9">“ ‘ಆದರೆ ದೇಶದ ಜನರು ನಿಶ್ಚಿತ ಹಬ್ಬಗಳಲ್ಲಿ ಯೆಹೋವ ದೇವರ ಮುಂದೆ ಬರುವಾಗ ಉತ್ತರದ ಬಾಗಿಲಿನಿಂದ ಪ್ರವೇಶಿಸಿ ಆರಾಧಿಸಿದ ಮೇಲೆ ಅವನು ದಕ್ಷಿಣದ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ಮತ್ತು ದಕ್ಷಿಣ ಬಾಗಿಲಿನ ಮಾರ್ಗವಾಗಿ ಪ್ರವೇಶಿಸುವವನು ಉತ್ತರ ಬಾಗಿಲಿನ ಮಾರ್ಗವಾಗಿ ಹೊರಗೆ ಹೋಗಬೇಕು. ದಕ್ಷಿಣದ ಬಾಗಿಲಿನ ಮಾರ್ಗವಾಗಿ ಪ್ರವೇಶಿಸಿದ ಬಾಗಿಲಿನ ಮಾರ್ಗವಾಗಿಯೇ ತಿರುಗಿ ಹೊರಗೆ ಹೋಗಬಾರದು. ಆದರೆ ಅದಕ್ಕೆ ಎದುರಾಗಿರುವ ಬಾಗಿಲಿನಿಂದ ಹೊರಗೆ ಹೋಗಬೇಕು.</verse>
				<verse number="10">ರಾಜಕುಮಾರನು ಅವರ ಮಧ್ಯದಲ್ಲೆ ಅವರು ಒಳಗೆ ಹೋಗುವಾಗ ಒಳಗೆ ಹೋಗಬೇಕು, ಹೊರಗೆ ಹೋಗುವಾಗ ಹೊರಗೆ ಬರಬೇಕು.</verse>
				<verse number="11">ನಿಶ್ಚಿತ ಹಬ್ಬಗಳಲ್ಲಿಯೂ ಸಭೆಗಳಲ್ಲಿಯೂ ಧಾನ್ಯ ಸಮರ್ಪಣೆಗೆ ಹೋರಿಗೆ ಒಂದು ಎಫವೂ ಟಗರಿಗೆ ಒಂದು ಎಫವೂ ಕುರಿಮರಿಗಳಿಗೆ ಅವರ ಕೈಲಾಗುವಷ್ಟು ಕೊಡಬೇಕು. ಎಫ ಒಂದಕ್ಕೆ ಎಣ್ಣೆಯ ಒಂದು ಹಿನ್ನು ಇರಬೇಕು.</verse>
				<verse number="12">“ ‘ರಾಜಕುಮಾರನು ಉಚಿತವಾದ ದಹನಬಲಿಯನ್ನಾಗಲಿ ಸಮಾಧಾನದ ಬಲಿಗಳನ್ನಾಗಲಿ ಉಚಿತವಾಗಿ ಯೆಹೋವ ದೇವರಿಗೆ ಸಮರ್ಪಿಸುವಾಗ ಅವರು ಪೂರ್ವದಿಕ್ಕಿಗೆ ಎದುರಾಗಿರುವ ಬಾಗಿಲನ್ನು ಅವನಿಗೆ ತೆರೆಯಬೇಕು. ಆಗ ಅವನು ತನ್ನ ದಹನಬಲಿಯನ್ನು ತನ್ನ ಸಮಾಧಾನದ ಬಲಿಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಹಾಗೆ ಸಮರ್ಪಣೆಮಾಡಿ ಹೊರಗೆ ಹೋಗಬೇಕು, ಅವನು ಹೊರಗೆ ಹೋದ ಮೇಲೆ ಬಾಗಿಲನ್ನು ಮುಚ್ಚಬೇಕು.</verse>
				<verse number="13">“ ‘ನೀನು ಪ್ರತಿದಿನವೂ ಯೆಹೋವ ದೇವರಿಗೆ ಒಂದು ವರ್ಷದ ದೋಷರಹಿತವಾದ ಕುರಿಮರಿಯ ದಹನಬಲಿಯನ್ನು ಸಿದ್ಧಮಾಡಬೇಕು. ಹೀಗೆ ಪ್ರತಿದಿನವೂ ಮುಂಜಾನೆ ನಡೆಯಬೇಕು.</verse>
				<verse number="14">ಅದಕ್ಕೆ ಅರ್ಪಣೆಯಾಗಿ ಪ್ರತಿದಿನದ ಮುಂಜಾನೆಯಲ್ಲಿ ನೀನು ಸುಮಾರು ಎರಡುವರೆ ಕಿಲೋಗ್ರಾಂ ಗೋಧಿ ಹಿಟ್ಟಿನಲ್ಲಿ ಕಲಿಸುವ ಹಾಗೆ ಸುಮಾರು ಒಂದುವರೆ ಲೀಟರ್ ಎಣ್ಣೆಯನ್ನು ಸಿದ್ಧಮಾಡಬೇಕು. ಇದು ಯೆಹೋವ ದೇವರಿಗೆ ನಿತ್ಯನಿಯಮದ ಪ್ರಕಾರ ಎಡೆಬಿಡದ ಧಾನ್ಯ ಸಮರ್ಪಣೆಯಾಗಿದೆ.</verse>
				<verse number="15">ಹೀಗೆ ಅವರು ಕುರಿಮರಿಯನ್ನು ಧಾನ್ಯ ಸಮರ್ಪಣೆಯನ್ನು ಎಣ್ಣೆಯನ್ನು ಪ್ರತಿದಿನದ ಮುಂಜಾನೆಯಲ್ಲಿ ಎಡೆಬಿಡದ ದಹನಬಲಿಯನ್ನಾಗಿ ಸಿದ್ಧಮಾಡಬೇಕು.</verse>
				<verse number="16">“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ರಾಜಕುಮಾರನು ತನ್ನ ಪುತ್ರರಲ್ಲಿ ಯಾವನಿಗಾದರೂ ದಾನವನ್ನು ಕೊಟ್ಟರೆ ಅದರ ಬಾಧ್ಯತೆಯು ಅವನ ಕುಮಾರರಿಗೆ ಸಲ್ಲಬೇಕು. ಏಕೆಂದರೆ ಅದು ಬಾಧ್ಯವಾಗಿ ಅವರ ಸೊತ್ತಾಗಿದೆ.</verse>
				<verse number="17">ಆದರೆ ಆತನು ತನ್ನ ಸೊತ್ತಿನೊಳಗಿಂದ ತನ್ನ ಸೇವಕರಲ್ಲಿ ಒಬ್ಬರಿಗೆ ದಾನವಾಗಿ ಕೊಟ್ಟರೆ, ಅದು ಬಿಡುಗಡೆ ವರ್ಷದವರೆಗೂ ಅವನಿಗಾಗಿದ್ದು ಆಮೇಲೆ ಮತ್ತೆ ರಾಜಕುಮಾರನಿಗೆ ಸೇರಬೇಕು. ಅವನ ಸೊತ್ತು ಅವನ ಮಕ್ಕಳಿಗೆ ಮಾತ್ರ ಸೇರಬೇಕು. ಇದು ಅವರದೇ.</verse>
				<verse number="18">ಇದಾದ ಮೇಲೆ ರಾಜಕುಮಾರನು ಜನರ ಸೊತ್ತನ್ನು ಬಲವಂತವಾಗಿ ತೆಗೆದುಕೊಂಡು ಬಾಧ್ಯತೆಯೊಳಗಿಂದ ಅವರನ್ನು ತಳ್ಳಬಾರದು. ನನ್ನ ಜನರು ತಮ್ಮ ತಮ್ಮ ಬಾಧ್ಯತೆಯನ್ನು ಕಳೆದುಕೊಳ್ಳಬಾರದು. ತಂದೆಯು ತನ್ನ ಸ್ವಂತ ಬಾಧ್ಯತೆಯಿಂದಲೇ ತನ್ನ ಪುತ್ರರಿಗೆ ಸೊತ್ತನ್ನು ಕೊಡಬೇಕು.’ ”</verse>
				<verse number="19">ಆಮೇಲೆ ಅವನು ನನ್ನನ್ನು ಬಾಗಿಲಿನ ಪಕ್ಕದಲ್ಲಿದ್ದ ಪ್ರವೇಶವಿದ್ದ ಉತ್ತರಕ್ಕೆ ಅಭಿಮುಖವಾದ ಯಾಜಕರ ಪರಿಶುದ್ಧ ಕೊಠಡಿಗೆ ಕರೆದುಕೊಂಡು ಹೋದನು. ಅಲ್ಲಿ ಅವುಗಳ ಪಶ್ಚಿಮದ ಕಡೆಗೆ ಒಂದು ಸ್ಥಳವಿತ್ತು.</verse>
				<verse number="20">ಆಗ ಅವನು ನನಗೆ, “ಯಾಜಕರು ಅಪರಾಧ ಬಲಿಯನ್ನೂ ದೋಷಪರಿಹಾರ ಬಲಿಯನ್ನೂ ಬೇಯಿಸಿದ ಧಾನ್ಯ ಸಮರ್ಪಣೆಯನ್ನು ಸುಡುವಂತೆ ಏರ್ಪಡಿಸಿರುವ ಸ್ಥಳವು ಇದೇ. ಜನರನ್ನು ಪರಿಶುದ್ಧ ಮಾಡುವುದಕ್ಕೆ ಅವರು ಅವುಗಳನ್ನು ಹೊರಗಿನ ಅಂಗಳಕ್ಕೆ ತೆಗೆದುಕೊಂಡು ಹೋಗಬಾರದು,” ಎಂದು ಹೇಳಿದನು.</verse>
				<verse number="21">ಆಗ ಅವನು ನನ್ನನ್ನು ಹೊರಗಿನ ಅಂಗಳಕ್ಕೆ ಕರೆದುಕೊಂಡು ಹೋಗಿ ಅಂಗಳದ ನಾಲ್ಕು ಮೂಲೆಗಳನ್ನು ಹಾದುಹೋಗುವಂತೆ ಮಾಡಿದನು. ಅಂಗಳದ ಒಂದೊಂದು ಮೂಲೆಯಲ್ಲಿ ಒಂದು ಅಂಗಳವನ್ನು ನಾನು ಕಂಡೆನು.</verse>
				<verse number="22">ಅಂಗಳದ ನಾಲ್ಕು ಮೂಲೆಯಲ್ಲಿ ನಲವತ್ತು ಮೊಳ ಉದ್ದವಾಗಿಯೂ ಮೂವತ್ತು ಮೊಳ ಅಗಲವಾಗಿಯೂ ಕೂಡಿಕೊಂಡಿದ್ದವು. ಆ ನಾಲ್ಕೂ ಮೂಲೆಗಳಿಗೂ ಒಂದೇ ಅಳತೆಯಾಗಿತ್ತು.</verse>
				<verse number="23">ಅವುಗಳಲ್ಲಿ ಎಂದರೆ ಆ ನಾಲ್ಕರಲ್ಲಿ ಸುತ್ತಲೂ ಸಾಲು ಇತ್ತು. ಆ ಸಾಲುಗಳ ಕೆಳಗೆ ಸುತ್ತಲೂ ಒಲೆಗಳಿದ್ದವು.</verse>
				<verse number="24">ಆಮೇಲೆ ಅವನು ನನಗೆ, “ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂಥ ಸ್ಥಳಗಳು ಎಂದು ಹೇಳಿದನು.”</verse>
			</chapter>
			<chapter number="47">
				<verse number="1">ಆ ಮನುಷ್ಯನು ನನ್ನನ್ನು ಮತ್ತೆ ಆಲಯದ ಬಾಗಿಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು, ಏಕೆಂದರೆ ಆಲಯದ ಮುಂಭಾಗದಲ್ಲಿ ನೀರು ಇತ್ತು. ಆ ನೀರು ಆಲಯದ ದಕ್ಷಿಣಕ್ಕೆ ಕೆಳಗಡೆ ಹರಿಯಿತು.</verse>
				<verse number="2">ಆಮೇಲೆ ಅವನು ನನ್ನನ್ನು ಬಾಗಿಲಿನ ಮಾರ್ಗವಾಗಿ ಉತ್ತರದ ಕಡೆಗೆ ಕರೆದುಕೊಂಡು ಹೋಗಿ ನನ್ನನ್ನು ಹೊರಗಿನ ಬಾಗಿಲಿನವರೆಗೂ ಹೊರಗಿನ ಮಾರ್ಗವಾದ ಪೂರ್ವಕ್ಕೆ ಅಭಿಮುಖವಾದ ಮಾರ್ಗವನ್ನು ಸುತ್ತುವಂತೆ ಮಾಡಿದನು. ಮತ್ತು ದಕ್ಷಿಣ ಭಾಗದಿಂದ ನೀರು ಜಿನುಗುತ್ತಿತ್ತು.</verse>
				<verse number="3">ಕೈಯಲ್ಲಿ ಅಳತೆಮಾಡುವ ನೂಲು ಇದ್ದ ಆ ಮನುಷ್ಯನು ಪೂರ್ವದ ಕಡೆಗೆ ಹೊರಟು ಸಾವಿರ ಮೊಳ ಅಳೆದ ಮೇಲೆ, ನನ್ನನ್ನು ನೀರಿನಿಂದ ದಾಟಿಸಿದನು. ಅಲ್ಲಿ ನೀರು ಪಾದ ಮುಳುಗುವಷ್ಟಿತ್ತು.</verse>
				<verse number="4">ಅವನು ಸಾವಿರಮೊಳಗಳನ್ನು ಅಳೆದ ಮೇಲೆ ನನ್ನನ್ನು ನೀರಿನಿಂದ ದಾಟಿಸಲು, ಆಗ ನೀರು ಮೊಣಕಾಲುಗಳ ತನಕ ಇತ್ತು; ಇನ್ನೂ ಸಾವಿರ ಅಳೆದು ನನ್ನನ್ನು ದಾಟಿಸಲಾಗಿ ನೀರು ಸೊಂಟದವರೆಗೂ ಇತ್ತು.</verse>
				<verse number="5">ಇನ್ನೂ ಸಾವಿರ ಅಳೆದ ಮೇಲೆ ಅದು ನಾನು ದಾಟಲಾಗದಂಥ ನದಿಯಾಗಿತ್ತು. ಏಕೆಂದರೆ ನೀರು ಹೆಚ್ಚಿ, ಈಜುವಷ್ಟಾಗಿ ದಾಟಲಾಗದಷ್ಟು ನದಿಯಾಗಿತ್ತು.</verse>
				<verse number="6">ಅವರು ನನಗೆ, “ಮನುಷ್ಯಪುತ್ರನೇ, ನೀನು ಇದನ್ನು ನೋಡಿದೆಯಾ?” ಆಗ ಅವನು ನನ್ನನ್ನು ನಡೆಸಿಕೊಂಡು ಮತ್ತೆ ನದಿಯ ತೀರಕ್ಕೆ ಕರೆತಂದನು.</verse>
				<verse number="7">ನಾನು ತಿರುಗಿ ಬಂದಾಗ ಇಗೋ, ನದಿಯ ತೀರದಲ್ಲಿ ಆ ಕಡೆಯೂ ಈ ಕಡೆಯೂ ಅತಿ ಹೆಚ್ಚು ಮರಗಳಿದ್ದವು.</verse>
				<verse number="8">ಆಗ ಅವನು, “ಈ ನೀರು ಪೂರ್ವಸೀಮೆಗೆ ಹೋಗಿ ಅರಾಬಾ ಎಂಬ ಒಣಭೂಮಿಗೆ ಇಳಿದು ಲವಣ ಸಮುದ್ರ ಸೇರುವುದು. ಲವಣ ಸಮುದ್ರ ಸೇರಿದ ಮೇಲೆ ಅಲ್ಲಿಯ ನೀರು ಸಿಹಿಯಾಗುವುದು.</verse>
				<verse number="9">ಈ ದಿನ ಬರುವ ಎಲ್ಲಾ ಸ್ಥಳಗಳಲ್ಲಿ ಸಂಚರಿಸುವಂಥ ಸಮಸ್ತ ಜೀವಿಗಳು ಬದುಕುವುವು ಮತ್ತು ಮೀನುಗಳ ಬಹುದೊಡ್ಡ ಸಮೂಹವಾಗುವುವು. ಏಕೆಂದರೆ ಈ ನೀರು ಅಲ್ಲಿಗೆ ಬರುವಾಗ ಅವು ಶುದ್ಧವಾಗುವುವು. ಈ ನದಿಗಳು ಎಲ್ಲಿಗೆ ಬರುತ್ತವೋ ಅಲ್ಲಿ ಎಲ್ಲಾ ಬದುಕುವುವು.</verse>
				<verse number="10">ಏನ್ಗೆದಿ ಮೊದಲುಗೊಂಡು ಎನ್ ಎಗ್ಲಯಿಮಿನವರೆಗೂ ಬೆಸ್ತರು ಅದರ ಬಳಿಯಲ್ಲಿ ನಿಲ್ಲುವರು. ಅಲ್ಲಿ ಬಲೆಹಾಸುವ ಸ್ಥಳಗಳಿರುವುವು. ಅದರ ಮೀನುಗಳು ಮಹಾಸಾಗರದ ಮೀನುಗಳಾಗಿ ಜಾತ್ಯಾನುಸಾರವಾಗಿ ಬಹಳವಾಗಿರುವುವು.</verse>
				<verse number="11">ಆದರೆ ಅದರ ಕೆಸರಾದ ಸ್ಥಳಗಳು, ಕೊಳಚೆಗಳು, ಶುದ್ಧವಾಗುವುದಿಲ್ಲ. ಅವು ಉಪ್ಪಿನ ಗಣಿಯಾಗುವುವು.</verse>
				<verse number="12">ನದಿಯ ಎರಡೂ ದಡಗಳಲ್ಲಿ ಆಹಾರಕ್ಕಾಗಿ ಎಲ್ಲಾ ತರಹದ ಮರಗಳು ಬೆಳೆಯುವುವು. ಅವುಗಳ ಎಲೆಗಳು ಬಾಡುವುದಿಲ್ಲ. ಅವುಗಳ ಹಣ್ಣು ಮುಗಿದುಹೋಗುವುದಿಲ್ಲ. ಅವು ತಿಂಗಳುಗಳ ಪ್ರಕಾರ ಹೊಸ ಫಲಗಳನ್ನು ಫಲಿಸುವುವು. ಏಕೆಂದರೆ ಅವುಗಳ ನೀರು ಪರಿಶುದ್ಧ ಸ್ಥಳದಿಂದ ಹೊರಟುಬಂದದ್ದು, ಅವುಗಳ ಹಣ್ಣುಗಳು ಆಹಾರಕ್ಕೂ ಅವುಗಳ ಎಲೆಗಳು ಔಷಧಕ್ಕೂ ಆಗುವುವು.”</verse>
				<verse number="13">ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೀವು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ಪ್ರಕಾರ ದೇಶವನ್ನು ಬಾಧ್ಯವಾಗಿ ಹೊಂದುವ ಹಾಗೆ ಇದು ಮೇರೆಯಾಗಿದೆ. ಯೋಸೇಫನಿಗೆ ಎರಡು ಪಾಲುಗಳು ಕೊಡಲಾಗಿದೆ.</verse>
				<verse number="14">ನೀವು ಒಬ್ಬೊಬ್ಬರೂ ಸರಿಯಾಗಿ ಅದನ್ನು ಬಾಧ್ಯವಾಗಿ ಹೊಂದಬೇಕು. ಏಕೆಂದರೆ ಅದನ್ನು ನಿಮ್ಮ ಪಿತೃಗಳಿಗೆ ಕೊಡುವ ಹಾಗೆ ನಾನು ಕೈಯೆತ್ತಿ ಪ್ರಮಾಣ ಮಾಡಿದ್ದೇನೆ. ಈ ದೇಶವು ನಿಮಗೆ ಬಾಧ್ಯವಾಗಿ ಬರುವುದು.</verse>
				<verse number="15">“ಇದೇ ದೇಶದ ಮೇರೆಯು: “ಉತ್ತರದ ಕಡೆಗೆ ಮಹಾ ಸಮುದ್ರದಿಂದ ಮೊದಲುಗೊಂಡು ಹೆತ್ಲೋನಿನ ಮಾರ್ಗವಾಗಿ ಲೆಬೊ ಹಮಾತ್ ದಾಟಿ ಚೆದಾದಿಗೆ ಸೇರುವವರೆಗೂ;</verse>
				<verse number="16">ಹಮಾತೂ ಬೇರೋತವು, ದಮಸ್ಕದವರೆಗೂ ಹಾಮಾತಿನ ಮೇರೆಗೂ ಮಧ್ಯವಾಗಿರುವ ಸಿಬ್ರಯಿಮ್ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.</verse>
				<verse number="17">ಹೀಗೆ ಹಚರ್ ಏನಾನೂ ದಮಸ್ಕದ ಮೇರೆಯೂ ಉತ್ತರದ ಕಡೆಗಿರುವ ಹಮಾತ್ಯರದು ಹಾಮಾತಿನ ಮೇರೆಯೂ ಉತ್ತರದ ಕಡೆಯಾಗಿರುವುದು. ಇದು ಉತ್ತರ ಮೇರೆ.</verse>
				<verse number="18">ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಾಯೇಲ್ ದೇಶಕ್ಕೂ ಮಧ್ಯೆ ಯೊರ್ದನ್ ಹೊಳೆಯ ಮೇರೆಯಿಂದ ಲವಣ ಸಮುದ್ರದಿಂದ ಮತ್ತು ತಾಮರ್ ನೀವು ಅಳೆಯಬೇಕು. ಇದೇ ಪೂರ್ವದಿಕ್ಕಿನ ಮೇರೆಯಾಗಿದೆ.</verse>
				<verse number="19">ದಕ್ಷಿಣದ ಕಡೆಗಿರುವ ದಕ್ಷಿಣದ ಮೇರೆಯೂ ತಾಮಾರ್ ಮೊದಲುಗೊಂಡು ಮೆರೀಬಾ ಕಾದೇಶಿನ ಹಳ್ಳದ ಮೇಲೆ ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರದವರೆಗೆ ಇರುವುದು. ಇದೇ ದಕ್ಷಿಣದ ಮೇರೆ.</verse>
				<verse number="20">ಉತ್ತರದ ಮೇರೆಯಿಂದ ಹಮಾತಿನ ಪ್ರದೇಶದವರೆಗೂ ಇರುವ ದೊಡ್ಡ ಸಮುದ್ರವು ಪಶ್ಚಿಮದ ಕಡೆಗಿದೆ. ಇದೇ ಪಶ್ಚಿಮದ ಮೇರೆ.</verse>
				<verse number="21">“ಹೀಗೆ ನೀವು ಈ ದೇಶವನ್ನು ಇಸ್ರಾಯೇಲನ ಗೋತ್ರಗಳ ಪ್ರಕಾರ ಪಾಲುಮಾಡಿಕೊಳ್ಳಬೇಕು.</verse>
				<verse number="22">ನೀವು ಅದನ್ನು ನಿಮಗೂ ನಿಮ್ಮ ಮಧ್ಯದಲ್ಲಿ ತಂಗುವಂಥವರಿಗೂ ನಿಮ್ಮ ಮಧ್ಯದಲ್ಲಿ ಮಕ್ಕಳನ್ನು ಪಡೆದಂತ ವಿದೇಶಿಯರಿಗೂ ಚೀಟುಹಾಕಿ ಬಾಧ್ಯವಾಗಿ ವಿಭಾಗಿಸಿ ಹಂಚಬೇಕು. ಅವರು ನಿಮಗೆ ಇಸ್ರಾಯೇಲಿನ ಮಕ್ಕಳೊಳಗೆ ಹುಟ್ಟಿದವರೆಂದು ಪರಿಗಣಿಸಬೇಕು. ಅವರಿಗೆ ಇಸ್ರಾಯೇಲಿನ ಗೋತ್ರಗಳೊಳಗೆ ಬಾಧ್ಯತೆಯಾಗಬೇಕು.</verse>
				<verse number="23">ವಿದೇಶಿಯರು ಯಾವ ಗೋತ್ರದ ಸಂಗಡ ತಂಗುತ್ತಾರೋ ಅದರಲ್ಲಿಯೇ ನೀವು ಅವರಿಗೆ ಸೊತ್ತನ್ನು ಕೊಡಬೇಕು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
			</chapter>
			<chapter number="48">
				<verse number="1">“ಗೋತ್ರಗಳ ಹೆಸರುಗಳು ಯಾವುವೆಂದರೆ: “ಉತ್ತರದ ಕೊನೆಯಿಂದ ಹೆತ್ಲೋನಿನ ಮಾರ್ಗದ ಮೇರೆಯೂ ಹಾಮಾತಿಗೆ ಹೋಗುವ ಮಾರ್ಗವಾಗಿ ಹಚರ್ ಏನಾನಿನ ಉತ್ತರದ ಕಡೆಗಿರುವ ದಮಸ್ಕದ ಮೇರೆಯೂ ಹಮಾತಿನ ಬಳಿಯಲ್ಲಿ ಇರುವ ಪೂರ್ವ, ಪಶ್ಚಿಮ ಇವೇ ಅದರ ಕಡೆಗಳು, ದಾನ್ ಗೋತ್ರಕ್ಕೆ ಒಂದು ಭಾಗವಾಗಿದೆ.</verse>
				<verse number="2">ದಾನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದವರೆಗೂ ಆಶೇರನಿಗೆ ಒಂದು ಭಾಗವಾಗಿದೆ.</verse>
				<verse number="3">ಆಶೇರನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೆ ನಫ್ತಾಲಿಗೆ ಒಂದು ಭಾಗವಾಗಿದೆ.</verse>
				<verse number="4">ನಫ್ತಾಲಿಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೆ ಮನಸ್ಸೆಗೆ ಒಂದು ಭಾಗ.</verse>
				<verse number="5">ಮನಸ್ಸೆಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಎಫ್ರಾಯೀಮಿಗೆ ಒಂದು ಭಾಗ.</verse>
				<verse number="6">ಎಫ್ರಾಯೀಮ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದವರೆಗೆ ರೂಬೇನ್ ಗೆ ಒಂದು ಭಾಗ.</verse>
				<verse number="7">ರೂಬೇನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ, ಪಶ್ಚಿಮದ ಕಡೆಯವರೆಗೂ ಯೆಹೂದಕ್ಕೆ ಒಂದು ಭಾಗ.</verse>
				<verse number="8">“ಯೆಹೂದದ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಇಪ್ಪತ್ತೈದು ಸಾವಿರ ಮೊಳ ಅಗಲವಾದಂತ ನೀವು ಅರ್ಪಿಸುವಂತ ಕಾಣಿಕೆ ಪೂರ್ವದಿಂದ ಪಶ್ಚಿಮದ ಕಡೆಯವರೆಗೂ ಇರಬೇಕು.</verse>
				<verse number="9">“ನೀವು ಯೆಹೋವ ದೇವರಿಗೆ ಅರ್ಪಿಸುವಂತಹ ಕಾಣಿಕೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಮೊಳ ಅಗಲವೂ ಆಗಿರಬೇಕು.</verse>
				<verse number="10">ಅವರಿಗಾಗಿ ಎಂದರೆ ಯಾಜಕರಿಗಾಗಿ ಇದೇ ಪರಿಶುದ್ಧ ಕಾಣಿಕೆ ಆಗಿರಬೇಕು. ಅದು ಉತ್ತರಕ್ಕೆ ಇಪ್ಪತ್ತೈದು ಸಾವಿರ, ಪಶ್ಚಿಮಕ್ಕೆ ಹತ್ತು ಸಾವಿರ ಅಗಲವೂ ಪೂರ್ವಕ್ಕೆ ಹತ್ತು ಸಾವಿರ ಅಗಲವೂ ದಕ್ಷಿಣಕ್ಕೆ ಇಪ್ಪತ್ತೈದು ಸಾವಿರ ಉದ್ದವೂ ಇರಬೇಕು. ಅದರ ಮಧ್ಯದಲ್ಲಿ ಯೆಹೋವ ದೇವರ ಪರಿಶುದ್ಧ ಸ್ಥಳವೂ ಇರಬೇಕು.</verse>
				<verse number="11">ಇದು ನನಗೆ ನಂಬಿಗಸ್ತರಾಗಿ ನಡೆದುಕೊಂಡ ಚಾದೋಕನ ಪುತ್ರರಲ್ಲಿ ಪ್ರತಿಷ್ಠಿತರಾಗಿರುವ ಯಾಜಕರದಾಗಿರಬೇಕು; ಇಸ್ರಾಯೇಲರು ತಪ್ಪಿಹೋದಾಗ, ಲೇವಿಯರೂ ತಪ್ಪಿಹೋದ ಪ್ರಕಾರ ಚಾದೋಕಿನವರು ತಪ್ಪಿಹೋಗಲಿಲ್ಲ.</verse>
				<verse number="12">ಮೀಸಲಾಗಿರುವ ಈ ನಾಡಿನ ವಿಶೇಷ ಕಾಣಿಕೆಯು ಲೇವಿಯರ ಮೇರೆಯ ಬಳಿಯಲ್ಲಿಯೇ ಅತಿ ಪರಿಶುದ್ಧವಾದದ್ದಾಗಿರಬೇಕು.</verse>
				<verse number="13">“ಯಾಜಕರ ಮೇರೆಗೆ ಎದುರಾಗಿ ಲೇವಿಯರಿಗೆ ಇಪ್ಪತ್ತೈದು ಸಾವಿರ ಉದ್ದವೂ ಹತ್ತು ಸಾವಿರ ಅಗಲವೂ ಆಗಬೇಕು. ಒಟ್ಟು ಉದ್ದ ಇಪ್ಪತ್ತೈದು ಸಾವಿರ ಮತ್ತು ಅಗಲವು ಹತ್ತು ಸಾವಿರ.</verse>
				<verse number="14">ಅವರು ಅದರಲ್ಲಿ ಏನನ್ನೂ ಮಾರಬಾರದು, ಏನನ್ನೂ ಬದಲಾಯಿಸಬಾರದು. ದೇಶದ ಪ್ರಥಮ ಫಲವನ್ನು ಯಾರಿಗೂ ಕೊಡಬಾರದು. ಏಕೆಂದರೆ ಅದು ಯೆಹೋವ ದೇವರಿಗೆ ಪರಿಶುದ್ಧವಾಗಿದೆ.</verse>
				<verse number="15">“ಸುಮಾರು ಎರಡೂವರೆ ಕಿಲೋಮೀಟರ್ ಅಗಲ ಮತ್ತು ಸುಮಾರು ಹದಿಮೂರು ಕಿಲೋಮೀಟರ್ ಉದ್ದದ ಉಳಿದ ಪ್ರದೇಶವು ನಗರದ ಸಾಮಾನ್ಯ ಬಳಕೆಗಾಗಿ, ಇದು ಮನೆಗಳು ಮತ್ತು ಹುಲ್ಲುಗಾವಲುಗಳನ್ನು ಹೊಂದಿರುತ್ತದೆ. ನಗರವು ಅದರ ಮಧ್ಯದಲ್ಲಿ ಇರುತ್ತದೆ;</verse>
				<verse number="16">ಮತ್ತು ಅದರ ಅಳತೆಯು ಈ ರೀತಿ ಇರುತ್ತದೆ: ಉತ್ತರದ ಕಡೆಗೆ ಸುಮಾರು ಎರಡೂವರೆ ಕಿಲೋಮೀಟರ್, ದಕ್ಷಿಣದ ಕಡೆಗೆ ಸುಮಾರು ಎರಡೂವರೆ ಕಿಲೋಮೀಟರ್, ಪೂರ್ವಕ್ಕೆ ಸುಮಾರು ಎರಡೂವರೆ ಕಿಲೋಮೀಟರ್, ಪಶ್ಚಿಮಕ್ಕೆ ಸುಮಾರು ಎರಡೂವರೆ ಕಿಲೋಮೀಟರ್.</verse>
				<verse number="17">ಪಟ್ಟಣದ ಹುಲ್ಲುಗಾವಲು ಹೀಗಿರಬೇಕು. ಉತ್ತರದಲ್ಲಿ 135 ಮೀಟರ್ ದಕ್ಷಿಣದಲ್ಲಿ 135 ಮೀಟರ್ ಪೂರ್ವದಲ್ಲಿ 135 ಮೀಟರ್; ಪಶ್ಚಿಮದಲ್ಲಿ 135 ಮೀಟರ್.</verse>
				<verse number="18">ಕಾಣಿಕೆಯಾದ ಪರಿಶುದ್ಧಭಾಗಕ್ಕೆ ಎದುರಾಗಿರುವಂಥದ್ದೂ ಉದ್ದದಲ್ಲಿ ಉಳಿದ ಭೂಮಿಯು ಪೂರ್ವಕ್ಕೆ ಹತ್ತು ಸಾವಿರ ಮೊಳವಾಗಿಯೂ ಪಶ್ಚಿಮಕ್ಕೆ ಹತ್ತು ಸಾವಿರ ಮೊಳವಾಗಿಯೂ ಇರಬೇಕು. ಅದು ಕಾಣಿಕೆಯ ಪರಿಶುದ್ಧಭಾಗಕ್ಕೆ ಎದುರಾಗಿರಬೇಕು. ಅದರ ಆದಾಯವು ಪಟ್ಟಣದಲ್ಲಿ ಸೇವೆಮಾಡುವವರ ಆಹಾರಕ್ಕಾಗುವಷ್ಟು ಇರಬೇಕು.</verse>
				<verse number="19">ಪಟ್ಟಣದಲ್ಲಿ ಸೇವೆಮಾಡುವವರು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದಲೇ ಅದರಲ್ಲಿಯೇ ಸೇವೆಮಾಡಬೇಕು.</verse>
				<verse number="20">ಎಲ್ಲಾ ಕಾಣಿಕೆಯ ಸ್ಥಳವು ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ಇಪ್ಪತ್ತೈದು ಸಾವಿರ ಮೊಳ ಅಗಲವಾಗಿಯೂ ಇರಬೇಕು. ನೀವು ಪರಿಶುದ್ಧ ವಿಶೇಷ ಕಾಣಿಕೆಯನ್ನು ಚಚ್ಚೌಕವಾಗಿ ಪಟ್ಟಣದ ಸೊತ್ತಿನ ಸಂಗಡ ಅರ್ಪಿಸಬೇಕು.</verse>
				<verse number="21">“ಪರಿಶುದ್ಧ ಭಾಗವೂ ಪಟ್ಟಣದ ಸೊತ್ತಿಗೂ ಈ ಕಡೆಗೂ ಆ ಕಡೆಗೂ ಉಳಿದ ಭೂಮಿಯು ಕಾಣಿಕೆಯ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪೂರ್ವದ ಮೇರೆಯಲ್ಲಿರುವಂಥದ್ದೂ ಪಶ್ಚಿಮದಲ್ಲಿ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪಶ್ಚಿಮದ ಮೇರೆಯಲ್ಲಿರುವಂಥದ್ದೂ ಪ್ರಧಾನನಿಗಾದ ಪಾಲಿಗೆ ಎದುರಾಗಿಯೂ ಇರಬೇಕು. ಮೀಸಲಾದ ಪವಿತ್ರ ಕ್ಷೇತ್ರವೂ ಪವಿತ್ರಾಲಯವೂ ಅದರ ಮಧ್ಯದಲ್ಲಿರುವುವು.</verse>
				<verse number="22">ಇದಲ್ಲದೆ ಲೇವಿಯರ ಸೊತ್ತಿನಿಂದ ಮೊದಲುಗೊಂಡು ಪಟ್ಟಣದ ಸೊತ್ತಿನಿಂದ ಪ್ರಧಾನನ ನಡುವೆ ಇರುವಂಥದ್ದು ಯೆಹೂದದ ಮೇರೆಗೂ ಬೆನ್ಯಾಮೀನನ ಮೇರೆಗೂ ಮಧ್ಯದಲ್ಲಿರುವಂಥದ್ದೂ ಪ್ರಧಾನನಿಗೆ ಸಲ್ಲಬೇಕು.</verse>
				<verse number="23">“ಮಿಕ್ಕ ಗೋತ್ರಗಳ ವಿಷಯವೇನೆಂದರೆ: “ಪೂರ್ವದ ಕಡೆಯಿಂದ ಪಶ್ಚಿಮದವರೆಗೂ ಬೆನ್ಯಾಮೀನನ ಒಂದು ಭಾಗವಾಗಿದೆ.</verse>
				<verse number="24">ಬೆನ್ಯಾಮೀನನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದವರೆಗೂ ಸಿಮೆಯೋನ್ ಒಂದು ಭಾಗವಾಗಿದೆ.</verse>
				<verse number="25">ಸಿಮೆಯೋನ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಇಸ್ಸಾಕಾರ್ ನ ಒಂದು ಭಾಗವಾಗಿದೆ.</verse>
				<verse number="26">ಇಸ್ಸಾಕಾರ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಜೆಬುಲೂನ್ ನ ಒಂದು ಭಾಗವಾದೆ;</verse>
				<verse number="27">ಜೆಬುಲೂನ್ ನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಗಾದ್ ನ ಒಂದು ಭಾಗವಾಗಿದೆ.</verse>
				<verse number="28">ಗಾದಿನ ಮೇರೆಯ ಬಳಿಯಲ್ಲಿ ದಕ್ಷಿಣದ ಕಡೆಯಲ್ಲಿ ದಕ್ಷಿಣದ ಮೇರೆಯು ತಾಮಾರ್ ಮೊದಲುಗೊಂಡು ಮೆರೀಬಾ ಕಾದೇಶಿನ ಹಳ್ಳದ ಮೇಲೆ ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರದವರೆಗೆ ಇರುವುದು.</verse>
				<verse number="29">“ನೀವು ಇಸ್ರಾಯೇಲಿನ ಗೋತ್ರಗಳಿಗೆ ಚೀಟುಹಾಕಿ ಬಾಧ್ಯವಾಗಿ ಹಂಚಿಕೊಡಬೇಕಾದ ದೇಶವು ಇದೆ. ಅದರ ಭಾಗಗಳು ಇವೇ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="30">“ಪಟ್ಟಣದ ಹೊರಗೆ ನಿರ್ಗಮನ ಹೀಗಿರಬೇಕು: “ಉತ್ತರದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು.</verse>
				<verse number="31">ಪಟ್ಟಣದ ಬಾಗಿಲುಗಳು ಇಸ್ರಾಯೇಲಿನ ಗೋತ್ರಗಳ ಹೆಸರುಗಳ ಪ್ರಕಾರ ಇರಬೇಕು. ಉತ್ತರಕ್ಕೆ ಮೂರು ಬಾಗಿಲುಗಳು: ರೂಬೇನ್ ಬಾಗಿಲು ಒಂದು, ಯೆಹೂದ ಬಾಗಿಲು ಒಂದು, ಲೇವಿ ಬಾಗಿಲು ಒಂದು.</verse>
				<verse number="32">ಸುಮಾರು ಎರಡೂವರೆ ಕಿಲೋಮೀಟರ್ ಉದ್ದವಿರುವ ಪೂರ್ವದಲ್ಲಿ ಮೂರು ಬಾಗಿಲುಗಳಿರುತ್ತವೆ: ಯೋಸೇಫ್ ಬಾಗಿಲು ಒಂದು, ಬೆನ್ಯಾಮೀನನ ಬಾಗಿಲು, ಒಂದು ದಾನ್ ಬಾಗಿಲು ಒಂದು.</verse>
				<verse number="33">ಸುಮಾರು ಎರಡೂವರೆ ಕಿಲೋಮೀಟರ್ ಉದ್ದವಿರುವ ದಕ್ಷಿಣದಲ್ಲಿ ಮೂರು ಬಾಗಿಲುಗಳಿರುತ್ತವೆ: ಒಂದು ಸಿಮೆಯೋನ್ ಬಾಗಿಲು, ಒಂದು ಇಸ್ಸಾಕಾರ್ ನ ಬಾಗಿಲು, ಒಂದು ಜೆಬುಲೂನ್ ನ ಬಾಗಿಲು.</verse>
				<verse number="34">ಸುಮಾರು ಎರಡೂವರೆ ಕಿಲೋಮೀಟರ್ ಉದ್ದವಿರುವ ಪಶ್ಚಿಮದಲ್ಲಿ ಮೂರು ಬಾಗಿಲುಗಳಿರುತ್ತವೆ: ಒಂದು ಗಾದ್ ಬಾಗಿಲು, ಇನ್ನೊಂದು ಆಶೇರ್ ಬಾಗಿಲು, ಮತ್ತೊಂದು ನಫ್ತಾಲಿ ಬಾಗಿಲು.</verse>
				<verse number="35">“ಸುತ್ತಲೂ ಹದಿನೆಂಟು ಸಾವಿರ ಅಳತೆಗಳು. “ಆ ದಿನದಿಂದ ಆ ಪಟ್ಟಣದ ಹೆಸರು, ‘ಯೆಹೋವ ದೇವರ ನೆಲೆ ’ ” ಎಂಬುದೇ ಆಗಿರುವುದು.</verse>
			</chapter>
		</book>
		<book number="27">
			<chapter number="1">
				<verse number="1">ಯೆಹೂದದ ಅರಸನಾದ ಯೆಹೋಯಾಕೀಮನ ಆಳಿಕೆಯ ಮೂರನೆಯ ವರ್ಷದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಯೆರೂಸಲೇಮಿಗೆ ಬಂದು ಮುತ್ತಿಗೆಹಾಕಿದನು.</verse>
				<verse number="2">ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು ದೇವಾಲಯದ ಕೆಲವು ವಸ್ತುಗಳನ್ನು ಕೂಡ ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್ ದೇಶಕ್ಕೂ, ತನ್ನ ದೇವರ ಆಲಯಕ್ಕೂ ತಂದು, ಅವುಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.</verse>
				<verse number="3">ಅರಸನು ತನ್ನ ಕಂಚುಕಿಯರ ಮುಖ್ಯಸ್ಥನಾದ ಅಶ್ಪೆನಜನ ಸಂಗಡ ಮಾತನಾಡಿ ಅವನು ಇಸ್ರಾಯೇಲರೊಳಗೆ ಕೆಲವರನ್ನು ಅರಸನ ಸಂತಾನದೊಳಗಿಂದಲೂ, ಪ್ರಧಾನರೊಳಗಿಂದಲೂ</verse>
				<verse number="4">ಶಾರೀರಿಕ ನ್ಯೂನತೆ ಇಲ್ಲದವರಾಗಿಯೂ, ಸುಂದರವಾಗಿಯೂ, ಅವರು ಎಲ್ಲಾ ರೀತಿಯ ವಿಷಯಗಳನ್ನು ಕಲಿಯುವ ಸಾಮರ್ಥ್ಯವನ್ನು ಹೊಂದಿರಬೇಕು. ಅವರು ವಿವೇಕವುಳ್ಳವರಾಗಿಯೂ ಮತ್ತು ತ್ವರಿತವಾಗಿ ಅರ್ಥಮಾಡಿಕೊಳ್ಳುವವರಾಗಿಯೂ, ಅರಸನ ಅರಮನೆಯಲ್ಲಿ ಸೇವೆ ಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಬಾಬಿಲೋನಿಯರ ವಿದ್ಯೆಯನ್ನೂ, ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.</verse>
				<verse number="5">ಅರಸನು ರಾಜಭೋಜನದಲ್ಲಿಯೂ, ತಾನು ಕುಡಿಯುವ ದ್ರಾಕ್ಷಾರಸದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿಸಿದನು. ಹೀಗೆ ಅವರು ಮೂರು ವರ್ಷಗಳ ಕಾಲ ಪೋಷಿಸಲಾದ ಮೇಲೆ ಅರಸನ ಸನ್ನಿಧಿಯ ಸೇವಕರಾಗುವರು.</verse>
				<verse number="6">ಇವರಲ್ಲಿ ಯೆಹೂದದಿಂದ ದಾನಿಯೇಲ, ಹನನ್ಯ, ಮೀಶಾಯೇಲ್, ಅಜರ್ಯ ಎಂಬವರಿದ್ದರು.</verse>
				<verse number="7">ಇವರಿಗೆ ಕಂಚುಕಿಯರ ಯಜಮಾನನು ದಾನಿಯೇಲನಿಗೆ ಬೇಲ್ತೆಶಚ್ಚರ್ ಎಂದೂ, ಹನನ್ಯನಿಗೆ ಶದ್ರಕ್ ಎಂದೂ, ಮೀಶಾಯೇಲನಿಗೆ ಮೇಶಕ್ ಎಂದೂ, ಅಜರ್ಯನಿಗೆ ಅಬೇದ್‌ನೆಗೋ ಎಂಬ ಹೆಸರಿಟ್ಟನು.</verse>
				<verse number="8">ದಾನಿಯೇಲನು ಅರಸನ ಭೋಜನದ ಪಾಲಿನಿಂದಲಾದರೂ, ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವುದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು. ಆದ್ದರಿಂದ ತಾನು ಅಶುದ್ಧನಾಗದ ಹಾಗೆ ಕಂಚುಕಿಯರ ಯಜಮಾನನನ್ನು ಬೇಡಿಕೊಂಡನು.</verse>
				<verse number="9">ಆಗ ದೇವರು ದಾನಿಯೇಲನ ಮೇಲೆ ಕಂಚುಕಿಯರ ಯಜಮಾನನ ದಯೆ, ಕನಿಕರ ತೋರುವಂತೆ ಮಾಡಿದರು.</verse>
				<verse number="10">ಕಂಚುಕಿಯ ಯಜಮಾನನು ದಾನಿಯೇಲನಿಗೆ, “ನಿಮ್ಮ ಅನ್ನಪಾನಾದಿಗಳನ್ನು ನೇಮಿಸಿದ ನನ್ನ ಒಡೆಯ ಅರಸನಿಗೆ ನಾನು ಭಯಪಡುತ್ತೇನೆ. ಏಕೆಂದರೆ ಅರಸನು ಏಕೆ ನಿಮ್ಮ ಮುಖಗಳನ್ನು ನಿಮ್ಮ ಸ್ಥಿತಿಯಲ್ಲಿಯೇ ಇರುವ ಇತರ ಯೌವನಸ್ಥರಿಗಿಂತ ಕಳೆಗುಂದಿದವುಗಳನ್ನಾಗಿ ನೋಡಬೇಕು. ಈ ಪ್ರಕಾರ ನೀವು ಅರಸನ ಹತ್ತಿರ ನನ್ನ ತಲೆಗೆ ಅಪಾಯವನ್ನು ಬರಮಾಡುತ್ತೀರಿ?” ಎಂದನು.</verse>
				<verse number="11">ಆಮೇಲೆ ದಾನಿಯೇಲನು ಕಂಚುಕಿಯರ ಯಜಮಾನನು ಹನನ್ಯ, ಮೀಶಾಯೇಲ್, ಅಜರ್ಯ ಮತ್ತು ತನ್ನನ್ನು ನೋಡಿಕೊಳ್ಳುವುದಕ್ಕೆ ಇಟ್ಟಿದ್ದ ಮೇಲ್ವಿಚಾರಕನಿಗೆ,</verse>
				<verse number="12">“ನಿನ್ನ ಸೇವಕರನ್ನು ಹತ್ತು ದಿವಸಗಳವರೆಗೂ ಪರೀಕ್ಷಿಸಿ ನೋಡು. ಅವರು ನಮ್ಮ ಆಹಾರಕ್ಕೆ ಕೇವಲ ಕಾಯಿಪಲ್ಯಗಳನ್ನು, ಕುಡಿಯುವುದಕ್ಕೆ ಕೇವಲ ನೀರನ್ನು ಕೊಡಲಿ.</verse>
				<verse number="13">ಆಗ ನಮ್ಮ ಮುಖಗಳು ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರ ಮುಖಗಳು ನಿಮ್ಮ ಮುಂದೆ ಕಾಣಬರಲಿ. ನಿನಗೆ ಕಾಣುವ ಪ್ರಕಾರ ನಿನ್ನ ಸೇವಕರಿಗೆ ನೋಡುವ ಹಾಗೆ ಮಾಡು,” ಎಂದು ಬೇಡಿಕೊಂಡನು.</verse>
				<verse number="14">ಹಾಗೆಯೇ ಅವನು ಈ ಕಾರ್ಯದ ವಿಷಯವಾಗಿ ಒಪ್ಪಿ, ಹತ್ತು ದಿವಸಗಳವರೆಗೂ ಅವರನ್ನು ಪರೀಕ್ಷಿಸಿದನು.</verse>
				<verse number="15">ಹತ್ತು ದಿವಸಗಳಾದ ಮೇಲೆ ಅರಸನ ಭೋಜನದ ಪಾಲನ್ನು ತಿನ್ನುವ ಯೌವನಸ್ಥರೆಲ್ಲರಿಗಿಂತ ಇವರು ಆರೋಗ್ಯಕರವಾಗಿಯೂ, ಶರೀರದಲ್ಲಿ ಪುಷ್ಟರಾಗಿಯೂ ಕಾಣಿಸಿದರು.</verse>
				<verse number="16">ಹೀಗೆ ಮೇಲ್ವಿಚಾರಕನು ಅವರ ಭೋಜನದ ಪಾಲನ್ನು ಅವರು ಕುಡಿಯುವಂಥ ದ್ರಾಕ್ಷಾರಸವನ್ನು ತೆಗೆದುಹಾಕಿ ಅವರಿಗೆ ಸಸ್ಯಾಹಾರವನ್ನು ಕೊಟ್ಟನು.</verse>
				<verse number="17">ಈ ನಾಲ್ಕು ಯೌವನಸ್ಥರಿಗೆ ದೇವರು ಎಲ್ಲಾ ವಿದ್ಯೆಯಲ್ಲಿಯೂ, ಜ್ಞಾನದಲ್ಲಿಯೂ, ತಿಳುವಳಿಕೆಯನ್ನೂ, ವಿವೇಕವನ್ನೂ ಕೊಟ್ಟರು. ದಾನಿಯೇಲನು ಸಕಲ ದರ್ಶನಗಳಲ್ಲಿಯೂ, ಕನಸುಗಳಲ್ಲಿಯೂ ತಿಳುವಳಿಕೆಯುಳ್ಳವನಾಗಿದ್ದನು.</verse>
				<verse number="18">ಅರಸನು ಅವರನ್ನು ಕರೆತರಬೇಕೆಂದು ನೇಮಿಸಿದ ದಿವಸಗಳ ಕೊನೆಯಲ್ಲಿ ಕಂಚುಕಿಯರ ಯಜಮಾನನು ಅವರನ್ನು ನೆಬೂಕದ್ನೆಚ್ಚರನ ಮುಂದೆ ತಂದನು.</verse>
				<verse number="19">ಅರಸನು ಅವರ ಸಂಗಡ ಮಾತನಾಡಿದನು. ಅವರೆಲ್ಲರಲ್ಲಿ ದಾನಿಯೇಲ, ಹನನ್ಯ, ಮೀಶಾಯೇಲ್ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದ್ದರಿಂದಲೇ ಇವರು ಅರಸನ ಸನ್ನಿಧಿಯ ಸೇವಕರಾದರು.</verse>
				<verse number="20">ಅರಸನು ಅವರ ಹತ್ತಿರ ವಿಚಾರಿಸಿದಾಗ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರರಿಗಿಂತಲೂ, ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡನು.</verse>
				<verse number="21">ದಾನಿಯೇಲನು ರಾಜ ಕೋರೆಷನ ಆಳಿಕೆಯ ಮೊದಲನೆಯ ವರ್ಷದ ತನಕ ಅಲ್ಲಿಯೇ ಇದ್ದನು.</verse>
			</chapter>
			<chapter number="2">
				<verse number="1">ನೆಬೂಕದ್ನೆಚ್ಚರನ ಆಳಿಕೆಯ ಎರಡನೆಯ ವರ್ಷದಲ್ಲಿ ನೆಬೂಕದ್ನೆಚ್ಚರನು ಕನಸುಗಳನ್ನು ಕಂಡನು. ಅವನ ಆತ್ಮವು ಕಳವಳಗೊಂಡಿತು. ಅವನಿಗೆ ನಿದ್ರೆಯೇ ಬರಲಿಲ್ಲ.</verse>
				<verse number="2">ಆದ್ದರಿಂದ, ಅರಸನು ತನ್ನ ಕನಸನ್ನು ತಿಳಿಸಲು ಮಂತ್ರಗಾರರನ್ನೂ, ಜೋತಿಷ್ಯರನ್ನೂ, ಮಾಟಗಾರರನ್ನೂ, ಪಂಡಿತರನ್ನೂ ಕರೆಯಲು ಆಜ್ಞಾಪಿಸಿದನು. ಇವರೆಲ್ಲರೂ ಬಂದು ಅರಸನ ಮುಂದೆ ನಿಂತರು.</verse>
				<verse number="3">ಆಗ ಅರಸನು ಅವರಿಗೆ, “ನಾನು ಒಂದು ಕನಸು ಕಂಡಿದ್ದೇನೆ. ಅದರ ಅರ್ಥವೇನೋ ಎಂದು ತಿಳಿಯಲು ನನ್ನ ಮನಸ್ಸು ತತ್ತರಗೊಂಡಿದೆ,” ಎಂದನು.</verse>
				<verse number="4">ಆಗ ಪಂಡಿತರು ಅರಸನಿಗೆ ಅರಮಾಯ ಭಾಷೆಯಲ್ಲಿ, “ಅರಸನೇ, ನಿರಂತರವಾಗಿ ಬಾಳು! ಕನಸನ್ನು ನಿನ್ನ ಸೇವಕರಿಗೆ ಹೇಳು, ಆಗ ನಾವು ಅದರ ಅರ್ಥವನ್ನು ತಿಳಿಸುವೆವು,” ಎಂದು ಹೇಳಿದರು.</verse>
				<verse number="5">ಅರಸನು ಪಂಡಿತರಿಗೆ ಉತ್ತರವಾಗಿ, “ನನ್ನ ಈ ಮಾತು ಖಂಡಿತ. ನೀವು ಕನಸನ್ನು ಅದರ ಅರ್ಥದೊಂದಿಗೆ ನನಗೆ ತಿಳಿಸದಿದ್ದರೆ, ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು. ನಿಮ್ಮ ಮನೆಗಳನ್ನು ತಿಪ್ಪೆ ಗುಂಡಿಗಳನ್ನಾಗಿ ಮಾಡಿಸುವೆನು.</verse>
				<verse number="6">ಆದರೆ ನೀವು ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸಿದರೆ, ದಾನಬಹುಮಾನಗಳನ್ನೂ, ಬಹಳ ಘನತೆಯನ್ನೂ ನನ್ನಿಂದ ಪಡೆಯುವಿರಿ. ಹೀಗಿರಲಾಗಿ ಕನಸನ್ನೂ, ಅದರ ವ್ಯಾಖ್ಯಾನವನ್ನೂ ನನಗೆ ತಿಳಿಸಿರಿ,” ಎಂದು ಹೇಳಿದನು.</verse>
				<verse number="7">ಅವರು ಮತ್ತೆ ಉತ್ತರವಾಗಿ, “ಅರಸನು ತನ್ನ ಸೇವಕರಿಗೆ ಕನಸನ್ನು ಮೊದಲು ಹೇಳಲಿ. ಆಗ ಅದರ ಅರ್ಥವನ್ನು ನಾವು ತಿಳಿಸುವೆವು,” ಎಂದರು.</verse>
				<verse number="8">ಆಗ ಅರಸನು ಉತ್ತರವಾಗಿ, “ನಾನು ಇದನ್ನು ದೃಢವಾಗಿ ನಿರ್ಧರಿಸಿದ್ದೇನೆಂದು ಹೇಳಿದ್ದರಿಂದ ನೀವು ಸಮಯ ಉಳಿಸಿಕೊಳ್ಳುವುದಕ್ಕಾಗಿ ಪ್ರಯತ್ನಿಸುತ್ತಿದ್ದೀರೆಂದು ನನಗೆ ನಿಶ್ಚಯವಾಗಿದೆ.</verse>
				<verse number="9">ನೀವು ಕನಸನ್ನು ನನಗೆ ಹೇಳದಿದ್ದರೆ, ನಿಮಗೆ ಒಂದೇ ಒಂದು ಶಿಕ್ಷೆಯಿದೆ. ತಪ್ಪು ಮಾರ್ಗಕ್ಕೆ ನಡೆಸುವ ಹಾಗೂ ಕೆಟ್ಟ ಸಂಗತಿಗಳನ್ನು ನನಗೆ ಹೇಳಿ, ಪರಿಸ್ಥಿತಿಯನ್ನು ನೀವು ನನಗೆ ವಿರೋಧವಾಗಿ ಒಪ್ಪಂದ ಮಾಡಿಕೊಂಡಿದ್ದೀರಿ, ಬದಲಾವಣೆಯನ್ನು ನಿರೀಕ್ಷಿಸುವಂತೆ. ಆದ್ದರಿಂದ ಕನಸನ್ನು ನನಗೆ ಹೇಳಲೇಬೇಕು. ಆಗ ಅದನ್ನು ವ್ಯಾಖ್ಯಾನ ಮಾಡಿ, ವಿವರಿಸುವಿರೆಂದು ನಾನು ತಿಳಿಯುವೆನು,” ಎಂದನು.</verse>
				<verse number="10">ಆಗ ಪಂಡಿತರು ಅರಸನಿಗೆ ಉತ್ತರವಾಗಿ, “ಅರಸನ ಸಂಗತಿಯನ್ನು ತಿಳಿಸಬಲ್ಲ ವ್ಯಕ್ತಿ ಭೂಲೋಕದಲ್ಲಿಲ್ಲ! ಆದ್ದರಿಂದ ಯಾವ ಅರಸನಾದರೂ, ಯಾವ ಪ್ರಭುವಾದರೂ, ಯಾವ ಯಜಮಾನನಾದರೂ ಯಾವೊಬ್ಬ ಮಂತ್ರಗಾರನಲ್ಲೂ, ಜೋತಿಷ್ಯನಲ್ಲೂ, ಪಂಡಿತನಲ್ಲೂ ಇಂಥ ಸಂಗತಿಗಳನ್ನು ಕೇಳಲಿಲ್ಲ.</verse>
				<verse number="11">ಅರಸನು ಕೇಳುವ ಸಂಗತಿಯು ಕಷ್ಟಕರವಾದದ್ದು. ಮಾನವರ ಮಧ್ಯದಲ್ಲಿ ವಾಸಿಸದ ದೇವರುಗಳೇ ಹೊರತು, ಬೇರಾರೂ ಇದನ್ನು ಅರಸನ ಸನ್ನಿಧಿಯಲ್ಲಿ ತಿಳಿಸಲಾರರು.”</verse>
				<verse number="12">ಇದನ್ನು ಕೇಳಿ ಅರಸನು ಕೋಪ ಮತ್ತು ರೌದ್ರವುಳ್ಳವನಾಗಿ, ಬಾಬಿಲೋನಿನಲ್ಲಿರುವ ಎಲ್ಲಾ ಜ್ಞಾನಿಗಳನ್ನು ಕೊಲೆಮಾಡಬೇಕೆಂದು ಆಜ್ಞಾಪಿಸಿದನು.</verse>
				<verse number="13">ಹಾಗೆಯೇ ಜ್ಞಾನಿಗಳನ್ನು ಕೊಲ್ಲಬೇಕೆಂಬ ನಿರ್ಣಯವು ಹೊರಟಿತು. ದಾನಿಯೇಲನನ್ನೂ, ಅವನ ಜೊತೆಗಾರರನ್ನೂ ಕೊಲ್ಲಲು ಹುಡುಕಿದರು.</verse>
				<verse number="14">ಬಾಬಿಲೋನಿನ ಜ್ಞಾನಿಗಳನ್ನು ಕೊಲ್ಲಲು ಹೊರಟಿದ್ದ ಅರಸನ ಕಾವಲುಗಾರರ ಅಧಿಪತಿಯಾದ ಅರ್ಯೋಕನಿಗೆ ದಾನಿಯೇಲನು ಜ್ಞಾನದಿಂದಲೂ ಚಾತುರ್ಯದಿಂದಲೂ ಉತ್ತರಕೊಟ್ಟನು.</verse>
				<verse number="15">ದಾನಿಯೇಲನು ಅರಸನ ಅಧಿಪತಿಯಾದ ಅರ್ಯೋಕನಿಗೆ ಉತ್ತರವಾಗಿ, “ಅರಸನಿಂದ ಇಂಥ ಕಠಿಣವಾದ ಆಜ್ಞೆ ಏಕೆ?” ಎಂದು ಕೇಳಲು, ಅರ್ಯೋಕನು ದಾನಿಯೇಲನಿಗೆ ಆ ಸಂಗತಿಯ ಬಗ್ಗೆ ವಿವರಿಸಿದನು.</verse>
				<verse number="16">ಆಗ ದಾನಿಯೇಲನು ಅರಮನೆಗೆ ಹೋಗಿ ತನಗೆ ಸಮಯ ಕೊಡಲು ಇಷ್ಟಪಟ್ಟರೆ, ತಾನು ಅರಸನಿಗೆ ಅದರ ಅರ್ಥವನ್ನು ತಿಳಿಸುವೆನೆಂದು ಹೇಳಿದನು.</verse>
				<verse number="17">ಆಮೇಲೆ ದಾನಿಯೇಲನು ತನ್ನ ಮನೆಗೆ ಹೋಗಿ ತನ್ನ ಜೊತೆಗಾರರಾದ ಹನನ್ಯ, ಮೀಶಾಯೇಲ್, ಅಜರ್ಯರಿಗೆ ಈ ಸಂಗತಿಯನ್ನು ತಿಳಿಸಿದನು.</verse>
				<verse number="18">ದಾನಿಯೇಲನು ಅವನ ಜೊತೆಗಾರರೊಂದಿಗೆ ಉಳಿದ ಬಾಬಿಲೋನಿನ ಜ್ಞಾನಿಗಳ ಸಂಗಡ ಕೊಲೆಯಾಗದಂತೆ ಅವನು ತನ್ನ ಜೊತೆಗಾರರಿಗೆ ಅವರು ಈ ರಹಸ್ಯದ ಸಂಗತಿಯನ್ನು ಕುರಿತು ಪರಲೋಕದ ದೇವರಿಂದ ಕರುಣೆಯನ್ನು ಬೇಡಿಕೊಳ್ಳಬೇಕೆಂದು ಹೇಳಿದನು.</verse>
				<verse number="19">ಆ ರಹಸ್ಯವು ದಾನಿಯೇಲನಿಗೆ ರಾತ್ರಿ ದರ್ಶನದಲ್ಲಿ ಪ್ರಕಟವಾಯಿತು. ದಾನಿಯೇಲನು ಪರಲೋಕದ ದೇವರನ್ನು ಸ್ತುತಿಸಿ,</verse>
				<verse number="20">ಹೀಗೆಂದು ಹೇಳಿದನು: “ಯುಗಯುಗಾಂತರಕ್ಕೂ ದೇವರ ನಾಮಕ್ಕೆ ಸ್ತುತಿಸ್ತೋತ್ರವಾಗಲಿ! ಏಕೆಂದರೆ ಜ್ಞಾನವೂ, ಬಲವೂ ಅವರದಾಗಿದೆ.</verse>
				<verse number="21">ಅವರು ಕಾಲವನ್ನೂ, ಸಮಯವನ್ನೂ ಬದಲಾಯಿಸುತ್ತಾ ಅವರು ಅರಸರನ್ನು ಕಡೆಗಣಿಸುತ್ತಾರೆ ಮತ್ತು ಇತರರನ್ನು ಮೇಲಕ್ಕೆತ್ತುತ್ತಾರೆ. ಜ್ಞಾನಿಗಳಿಗೆ ಜ್ಞಾನವನ್ನೂ, ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡುವರು.</verse>
				<verse number="22">ಅಗಾಧವಾದವುಗಳನ್ನು, ರಹಸ್ಯವಾದವುಗಳನ್ನು ಪ್ರಕಟ ಮಾಡುತ್ತಾರೆ. ಕತ್ತಲೆಯಲ್ಲಿ ಇರುವಂಥವುಗಳನ್ನು ತಿಳಿದಿರುವಂತವರಾಗಿದ್ದಾರೆ. ಬೆಳಕು ಅವರೊಳಗೆ ವಾಸಿಸುತ್ತದೆ.</verse>
				<verse number="23">ನನ್ನ ಪಿತೃಗಳ ದೇವರೇ, ನಾನು ನಿಮ್ಮನ್ನು ಕೊಂಡಾಡಿ, ನಿಮಗೆ ಕೃತಜ್ಞತೆ ಸಲ್ಲಿಸುತ್ತೇನೆ. ಏಕೆಂದರೆ ನೀವು ನನಗೆ ಜ್ಞಾನವನ್ನೂ, ಬಲವನ್ನೂ ಕೊಟ್ಟು; ನಾವು ನಿನ್ನಿಂದ ಅಪೇಕ್ಷಿಸಿಕೊಂಡದ್ದನ್ನು ನಮಗೆ ತಿಳಿಯಪಡಿಸಿದ್ದೀರಿ; ನೀವು ಈಗ ನಮಗೆ ಅರಸನ ಕನಸನ್ನು ತಿಳಿಯಪಡಿಸಿದ್ದೀರಿ.”</verse>
				<verse number="24">ದಾನಿಯೇಲನು ಬಾಬಿಲೋನಿನ ಜ್ಞಾನಿಗಳನ್ನು ನಾಶಮಾಡಲು ಅರಸನ ಆಜ್ಞೆಯನ್ನು ಹೊಂದಿದ ಅರ್ಯೋಕನ ಹತ್ತಿರ ಹೋಗಿ ಅವನಿಗೆ, “ನೀನು ಬಾಬಿಲೋನಿನ ಜ್ಞಾನಿಗಳನ್ನು ಕೊಲ್ಲಬೇಡ. ನನ್ನನ್ನು ಅರಸನ ಮುಂದೆ ಕರೆದುಕೊಂಡು ಹೋಗು. ಆಗ ನಾನು ಅರಸನಿಗೆ ಅವನ ಕನಸಿನ ಅರ್ಥವನ್ನು ತಿಳಿಸುತ್ತೇನೆ,” ಎಂದನು.</verse>
				<verse number="25">ಅರ್ಯೋಕನು ದಾನಿಯೇಲನನ್ನು ತ್ವರೆಯಾಗಿ ಅರಸನ ಮುಂದೆ ಕರೆದುಕೊಂಡು ಹೋಗಿ, ಆತನಿಗೆ, “ಯೆಹೂದ್ಯರ ಸೆರೆಯವರಲ್ಲಿ ನನಗೆ ಒಬ್ಬ ಮನುಷ್ಯನು ಸಿಕ್ಕಿದ್ದಾನೆ. ಅವನು ಅರಸನಿಗೆ ಅವನ ಕನಸಿನ ಅರ್ಥವನ್ನು ತಿಳಿಸುತ್ತಾನೆ,” ಎಂದನು.</verse>
				<verse number="26">ಅರಸನು ಬೇಲ್ತೆಶಚ್ಚರನೆಂಬ ದಾನಿಯೇಲನನ್ನು ಕುರಿತು, “ನಾನು ಕಂಡ ಕನಸನ್ನೂ, ಅದರ ಅರ್ಥವನ್ನೂ ನನಗೆ ತಿಳಿಸುವ ಸಾಮರ್ಥ್ಯವು ನಿನಗಿದೆಯೋ?” ಎಂದನು.</verse>
				<verse number="27">ದಾನಿಯೇಲನು ಅರಸನ ಸನ್ನಿಧಿಯಲ್ಲಿ ಉತ್ತರವಾಗಿ, “ಅರಸನು ಕೇಳುವ ರಹಸ್ಯವನ್ನು ಜ್ಞಾನಿಗಳೂ, ಜ್ಯೋತಿಷ್ಯರೂ, ಮಂತ್ರಗಾರರೂ, ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.</verse>
				<verse number="28">ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತಹ ದೇವರು ಪರಲೋಕದಲ್ಲಿ ಇದ್ದಾರೆ. ಅವರು ಮುಂಬರುವ ದಿವಸಗಳಲ್ಲಿ ಸಂಭವಿಸುವಂಥವುಗಳನ್ನು ಅರಸನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸುತ್ತಾರೆ. ನಿನ್ನ ಕನಸಿನಲ್ಲಿ ನಿನ್ನ ಹಾಸಿಗೆಯಲ್ಲಿ ನೀನು ಮಲಗಿದಾಗ, ನಿನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳು ಇವೇ ಆಗಿವೆ.</verse>
				<verse number="29">“ಅರಸನೇ, ನೀನು ಹಾಸಿಗೆಯ ಮೇಲೆ ಮಲಗಿರುವಾಗ, ಇನ್ನು ಮುಂದೆ ಏನು ಸಂಭವಿಸುವುದೋ, ಎಂಬ ಯೋಚನೆಯು ನಿನ್ನಲ್ಲಿ ಹುಟ್ಟಿತ್ತು. ಆ ರಹಸ್ಯಗಳನ್ನು ವ್ಯಕ್ತಪಡಿಸುವವರು, ಮುಂದೆ ಸಂಭವಿಸುವುದು ಏನೆಂಬುದನ್ನು ನಿನಗೆ ಗೋಚರಪಡಿಸುತ್ತಾರೆ.</verse>
				<verse number="30">ಆದರೆ ನಾನೇ ಎಲ್ಲಾ ಜೀವಂತರಿಗಿಂತ ಹೆಚ್ಚು ಬುದ್ಧಿಯುಳ್ಳವನೆಂದಲ್ಲದಿದ್ದರೂ, ಕನಸಿನ ಅರ್ಥವು ಅರಸನಾದ ನಿನಗೆ ಗೋಚರವಾಗಿ, ನಿನ್ನ ಹೃದಯದ ಯೋಚನೆಗಳು ನಿನಗೆ ತಿಳಿದುಬರಲೆಂದು ನನಗೆ ಪ್ರಕಟವಾಗಿದೆ.</verse>
				<verse number="31">“ರಾಜನೇ, ನೀನು ನೋಡಲಾಗಿ, ಇಗೋ ಒಂದು ದೊಡ್ಡ ಪ್ರತಿಮೆಯು ಕಾಣಿಸಿತು. ಮಹಾ ಪ್ರಕಾಶಮಾನವಾದ ಆ ದೊಡ್ಡ ಪ್ರತಿಮೆಯು ನಿನ್ನ ಮುಂದೆ ನಿಂತಿತ್ತು. ಅದರ ಆಕಾರವು ಭಯಂಕರವಾಗಿತ್ತು.</verse>
				<verse number="32">ಈ ಪ್ರತಿಮೆಯ ತಲೆಯು ಅಪ್ಪಟ ಬಂಗಾರದಿಂದಲೂ, ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ, ಅದರ ಹೊಟ್ಟೆಯು ಮತ್ತು ತೊಡೆಗಳು ಕಂಚಿನಿಂದಲೂ,</verse>
				<verse number="33">ಅದರ ಕಾಲುಗಳು ಕಬ್ಬಿಣದಿಂದಲೂ, ಅದರ ಪಾದಗಳು ಅರ್ಧ ಕಬ್ಬಿಣವೂ ಅರ್ಧ ಮಣ್ಣೂ ಆಗಿತ್ತು.</verse>
				<verse number="34">ನೀವು ನೋಡುತ್ತಿರಲಾಗಿ, ಒಂದು ಗುಂಡು ಬಂಡೆಯು ಮಾನವ ಹಸ್ತದ ಸಹಾಯವಿಲ್ಲದೆ ಒಡೆದು, ಅರ್ಧ ಕಬ್ಬಿಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದಗಳಿಗೆ ಬಡಿದು ಚೂರುಚೂರು ಮಾಡಿತು.</verse>
				<verse number="35">ಆಗ ಕಬ್ಬಿಣವೂ, ಮಣ್ಣೂ, ಕಂಚು, ಬೆಳ್ಳಿಯೂ, ಬಂಗಾರವೂ ಕೂಡ ಒಡೆದು, ಚೂರುಚೂರಾಗಿ, ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾದವು. ಅವುಗಳಿಗೆ ನೆಲೆ ಸಿಗದೆ, ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು. ಪ್ರತಿಮೆಯನ್ನು ಬಡಿದ ಕಲ್ಲು, ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.</verse>
				<verse number="36">“ಇದೇ ಕನಸು. ಇದರ ಅರ್ಥವನ್ನು ನಾವು ಅರಸನ ಮುಂದೆ ಹೇಳುತ್ತೇವೆ.</verse>
				<verse number="37">ಅರಸನೇ, ನೀನು ಅರಸರಿಗೆ ಅರಸನಾಗಿರುವೆ. ಏಕೆಂದರೆ ಪರಲೋಕದ ದೇವರು ನಿನಗೆ ರಾಜ್ಯವನ್ನೂ, ಬಲವನ್ನೂ, ಅಧಿಕಾರವನ್ನೂ, ಘನವನ್ನೂ ಕೊಟ್ಟಿದ್ದಾರೆ.</verse>
				<verse number="38">ಜನರನ್ನು, ಭೂಮಿಯ ಮೃಗಗಳನ್ನು, ಆಕಾಶದ ಪಕ್ಷಿಗಳನ್ನು, ಜೀವಿಸುವಂಥಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು, ಅವೆಲ್ಲವುಗಳಿಗೆ ನಿನ್ನನ್ನು ಆಳುವವನಾಗಿ ಮಾಡಿದ್ದಾರೆ. ಆ ಬಂಗಾರದ ತಲೆಯು ನೀನೇ.</verse>
				<verse number="39">“ನಿನ್ನ ತರುವಾಯ ನಿನಗಿಂತ ಕನಿಷ್ಠವಾದ ಇನ್ನೊಂದು ರಾಜ್ಯ ಏಳುವುದು. ಅನಂತರ ಮೂರನೆಯ ಕಂಚಿನ ರಾಜ್ಯ ಬರುವುದು. ಅದು ಸಮಸ್ತ ಭೂಮಿಯ ಮೇಲೂ ದೊರೆತನ ನಡೆಸುವುದು.</verse>
				<verse number="40">ಆಮೇಲೆ ನಾಲ್ಕನೆಯ ರಾಜ್ಯವು ಕಬ್ಬಿಣದ ಹಾಗೆ ಬಲವಾಗಿ ಇರುವುದು. ಏಕೆಂದರೆ ಕಬ್ಬಿಣವು ಸಮಸ್ತ ವಸ್ತುಗಳನ್ನು ವಶಮಾಡಿಕೊಂಡು, ಚೂರುಚೂರು ಮಾಡುತ್ತದೆ. ಕಬ್ಬಿಣವು ಹೇಗೆ ಎಲ್ಲವನ್ನು ಚೂರು ಮಾಡುವುದೋ, ಹಾಗೆಯೇ ಆ ರಾಜ್ಯವು ಇತರರೆಲ್ಲರನ್ನು ಚೂರುಚೂರಾಗಿ ಮಾಡಿ ಧ್ವಂಸ ಮಾಡುವುದು.</verse>
				<verse number="41">ಪಾದಗಳನ್ನೂ, ಕಾಲಿನ ಬೆರಳುಗಳನ್ನೂ ಅರ್ಧ ಮಣ್ಣಿನಿಂದಲೂ, ಅರ್ಧ ಕಬ್ಬಿಣದಿಂದಲೂ ಉಂಟಾದವೆಂದು ನೀನು ನೋಡಿದೆಯಲ್ಲಾ? ಅದೇ ರೀತಿ ಆ ರಾಜ್ಯವು ವಿಭಾಗವಾಗಿರುವುದು. ಆದರೆ ಅದರ ಬಲವು ನೀನು ಜೇಡಿಮಣ್ಣಿನ ಸಂಗಡ ಜೊತೆಗೂಡಿದ ಕಬ್ಬಿಣವನ್ನು ನೋಡಿದ ಹಾಗಿರುವುದು.</verse>
				<verse number="42">ಪಾದದ ಬೆರಳುಗಳು ಅರ್ಧ ಕಬ್ಬಿಣದಿಂದಲೂ, ಅರ್ಧ ಮಣ್ಣಿನಿಂದಲೂ ಮಾಡಿದ ಹಾಗೆ, ರಾಜ್ಯವು ಅರ್ಧ ಮುರಿದದ್ದಾಗಿಯೂ, ಅರ್ಧ ಬಲವಾದದ್ದಾಗಿಯೂ ಇರುವುದು.</verse>
				<verse number="43">ನೀನು ಕಬ್ಬಿಣವು ಜೇಡಿಮಣ್ಣಿನ ಸಂಗಡ ಮಿಶ್ರವಾಗಿರುವುದನ್ನು ನೋಡಿದ ಹಾಗೆ, ಜನರು ಮಿಶ್ರವಾಗಿರುವರು ಮತ್ತು ಕಬ್ಬಿಣವು ಮಣ್ಣಿನ ಸಂಗಡ ಕೂಡಿಕೊಳ್ಳದ ಪ್ರಕಾರ, ಅವರು ಒಬ್ಬರ ಸಂಗಡ ಒಬ್ಬರು ಕೂಡಿಕೊಳ್ಳುವುದಿಲ್ಲ.</verse>
				<verse number="44">“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.</verse>
				<verse number="45">ಮಾನವ ಹಸ್ತಗಳಿಲ್ಲದೆ, ಆದರೆ ಬೆಟ್ಟದೊಳಗಿಂದ ಕಡಿದು ತೆಗೆದ ಗುಂಡು ಬಂಡೆಯು ಕಬ್ಬಿಣವನ್ನೂ, ಕಂಚನ್ನೂ, ಮಣ್ಣನ್ನೂ, ಬೆಳ್ಳಿಯನ್ನೂ ಹಾಗೂ ಬಂಗಾರವನ್ನೂ ತುಂಡುತುಂಡಾಗಿ ಮಾಡಿದ ಆ ಗುಂಡು ಕಲ್ಲಿನ ದರ್ಶನವು ಇದೆ. “ಇದರಿಂದ ಭವಿಷ್ಯದಲ್ಲಿ ಏನಾಗುತ್ತದೆ ಎಂಬುದನ್ನು ಮಹಾ ದೇವರು ಅರಸನಿಗೆ ತೋರಿಸಿದ್ದಾರೆ. ಕನಸು ನಿಜವಾದದ್ದು, ಅದರ ಅರ್ಥವು ನಂಬತಕ್ಕದ್ದು,” ಎಂದನು.</verse>
				<verse number="46">ಆಗ ಅರಸನಾದ ನೆಬೂಕದ್ನೆಚ್ಚರನು ಅಡ್ಡಬಿದ್ದು, ದಾನಿಯೇಲನಿಗೆ ನಮಸ್ಕರಿಸಿ, ಅವನಿಗೆ ಕಾಣಿಕೆಗಳನ್ನೂ, ಸುಗಂಧ ದ್ರವ್ಯವನ್ನೂ ಅರ್ಪಿಸಬೇಕೆಂದೂ ಆಜ್ಞಾಪಿಸಿದನು.</verse>
				<verse number="47">ಅರಸನು ದಾನಿಯೇಲನಿಗೆ ಉತ್ತರವಾಗಿ, “ನೀನು ಈ ರಹಸ್ಯವನ್ನು ಪ್ರಕಟಮಾಡಲು ಸಮರ್ಥನಾದ್ದರಿಂದ ನಿಶ್ಚಯವಾಗಿ ನಿಮ್ಮ ದೇವರು ದೇವರುಗಳಿಗೆ ದೇವರಾಗಿಯೂ, ಅರಸುಗಳ ಒಡೆಯರಾಗಿಯೂ, ರಹಸ್ಯಗಳನ್ನು ಪ್ರಕಟ ಮಾಡುವವರಾಗಿಯೂ ಇದ್ದಾರೆ,” ಎಂದನು.</verse>
				<verse number="48">ಆಗ ಅರಸನು ದಾನಿಯೇಲನನ್ನು ಉನ್ನತ ಸ್ಥಾನದಲ್ಲಿರಿಸಿ, ಅವನಿಗೆ ಅನೇಕ ದೊಡ್ಡ ಬಹುಮಾನಗಳನ್ನು ಕೊಟ್ಟನು. ಸಮಸ್ತ ಬಾಬಿಲೋನಿನ ಪ್ರಾಂತಗಳಿಗೆ ಅಧಿಕಾರಿಯನ್ನಾಗಿಯೂ, ಬಾಬಿಲೋನಿನ ಸಮಸ್ತ ಜ್ಞಾನಿಗಳಿಗೆ ಮುಖ್ಯಾಧಿಪತಿಯನ್ನಾಗಿಯೂ ನೇಮಿಸಿದನು.</verse>
				<verse number="49">ದಾನಿಯೇಲನು ಅರಸನನ್ನು ಬೇಡಿಕೊಂಡಿದ್ದರಿಂದ, ಅರಸನು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರನ್ನು ಬಾಬಿಲೋನಿನ ಸಂಸ್ಥಾನದ ಕಾರ್ಯಾಧಿಕಾರಿಗಳನ್ನಾಗಿ ನೇಮಿಸಿದನು. ದಾನಿಯೇಲನು ಅರಸನ ಅರಮನೆಯಲ್ಲಿ ಉಳಿದನು.</verse>
			</chapter>
			<chapter number="3">
				<verse number="1">ಅರಸನಾದ ನೆಬೂಕದ್ನೆಚ್ಚರನು ಸುಮಾರು 27 ಮೀಟರ್ ಎತ್ತರ ಮತ್ತು ಸುಮಾರು ಎರಡೂವರೆ ಮೀಟರ್ ಅಗಲ ಇರುವ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ, ಬಾಬಿಲೋನ್ ಪ್ರಾಂತದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.</verse>
				<verse number="2">ಆಮೇಲೆ ನೆಬೂಕದ್ನೆಚ್ಚರನು ಉಪರಾಜರನ್ನೂ ರಾಜ್ಯಪಾಲರನ್ನೂ ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಖಜಾಂಚಿದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ಕರೆಯಿಸಿದನು.</verse>
				<verse number="3">ಆಗ ಉಪರಾಜರು, ರಾಜ್ಯಪಾಲರು, ಅಧಿಕಾರಸ್ಥರು, ನ್ಯಾಯಾಧಿಪತಿಗಳು, ಖಜಾಂಚಿದವರು, ಸಲಹೆಗಾರರು, ಪಂಡಿತರು, ಎಲ್ಲಾ ಪ್ರಾಂತಗಳ ಅಧಿಕಾರಿಗಳು ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ಕೂಡಿಬಂದು, ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ನಿಂತರು.</verse>
				<verse number="4">ಆಗ ಘೋಷಣೆ ಮಾಡುವವರು ಗಟ್ಟಿಯಾಗಿ ಕೂಗಿ, “ಪ್ರಜೆಗಳೇ, ಜನಾಂಗಗಳೇ, ವಿವಿಧ ಭಾಷೆಯವರೇ</verse>
				<verse number="5">ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾಗಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳಿದ ಕೂಡಲೇ, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು.</verse>
				<verse number="6">ಯಾರು ಅಡ್ಡಬೀಳದೆ, ನಮಸ್ಕರಿಸದೆ ಇರುವರೋ ಅಂಥವರನ್ನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯಲ್ಲಿ ಹಾಕಲಾಗುವುದು. ಇದು ರಾಜಾಜ್ಞೆ,” ಎಂದನು.</verse>
				<verse number="7">ಆದ್ದರಿಂದ ಜನರೆಲ್ಲರು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾಗಸ್ವರ ಮೊದಲಾದ ಶಬ್ದವನ್ನು ಕೇಳಿದ ಕೂಡಲೇ, ಎಲ್ಲಾ ಪ್ರಜೆಗಳು ಜನಾಂಗಗಳು ವಿವಿಧ ಭಾಷೆಯವರು ಅಡ್ಡಬಿದ್ದು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು.</verse>
				<verse number="8">ಆ ಸಮಯದಲ್ಲಿ ಪಂಡಿತರು ಯೆಹೂದ್ಯರ ಮೇಲೆ ದೂರು ಹೊರಿಸಲು ಅರಸನ ಸನ್ನಿಧಿಗೆ ಬಂದು</verse>
				<verse number="9">ಅರಸನಾದ ನೆಬೂಕದ್ನೆಚ್ಚರನಿಗೆ, “ಅರಸನೇ, ನೀನು ನಿರಂತರವಾಗಿ ಬಾಳು.</verse>
				<verse number="10">ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ ಮತ್ತು ನಾಗಸ್ವರ ಮುಂತಾದ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳಿದಾಗ ಪ್ರತಿಯೊಬ್ಬ ಮನುಷ್ಯನು ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕೆಂದೂ ಅರಸನು ಆಜ್ಞೆಯನ್ನು ಹೊರಡಿಸಿದ್ದಾನೆ.</verse>
				<verse number="11">ಅಡ್ಡಬೀಳದೆ ಆರಾಧಿಸದೆ ಇರುವವರನ್ನು ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಬೇಕೆಂದು ಆಜ್ಞೆಮಾಡಿದಿಯಲ್ಲಾ?</verse>
				<verse number="12">ಆದರೆ ನೀನು ಬಾಬಿಲೋನಿನ ಪ್ರಾಂತದ ಕೆಲಸಗಳ ಮೇಲೆ ಇಟ್ಟಿರುವ ಯೆಹೂದ್ಯರಾದ ಕೆಲವರು ಎಂದರೆ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರು ನಿನ್ನನ್ನು ಲಕ್ಷಿಸುವುದಿಲ್ಲ. ಅವರು ನಿನ್ನ ದೇವರುಗಳನ್ನಾಗಲಿ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನಾದರೂ ಆರಾಧಿಸುವುದಿಲ್ಲ,” ಎಂದು ಹೇಳಿದರು.</verse>
				<verse number="13">ನೆಬೂಕದ್ನೆಚ್ಚರನು ಉಗ್ರಕೋಪವುಳ್ಳವನಾಗಿ ಶದ್ರಕ್, ಮೇಶಕ್, ಅಬೇದ್‌ನೆಗೋ ಅವರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆತಂದರು.</verse>
				<verse number="14">ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರೇ, ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸದೆ ಇದ್ದೀರಿ ಎಂಬ ಮಾತು ನಿಜವೋ?</verse>
				<verse number="15">ಈಗ ನೀವು ಸಿದ್ಧವಾಗಿದ್ದು ತುತೂರಿ, ಕೊಳಲು, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಎಲ್ಲಾ ವಿಧವಾದ ವಾದ್ಯಗಳ ಶಬ್ದವನ್ನು ಕೇಳುವ ಸಮಯದಲ್ಲಿ ನಾನು ಮಾಡಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಆರಾಧಿಸದಿದ್ದರೆ ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಕುಲುಮೆಯ ಮಧ್ಯದಲ್ಲಿ ಹಾಕಲಾಗುವಿರಿ. ನನ್ನ ಕೈಯಿಂದ ನಿಮ್ಮನ್ನು ಬಿಡಿಸುವ ಆ ದೇವರು ಯಾರು?” ಎಂದು ಹೇಳಿದನು.</verse>
				<verse number="16">ಆಗ ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರು ಅರಸನಿಗೆ ಉತ್ತರವಾಗಿ, “ನೆಬೂಕದ್ನೆಚ್ಚರನೇ, ಈ ವಿಷಯದ ಬಗ್ಗೆ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ.</verse>
				<verse number="17">ಒಂದು ವೇಳೆ ಹಾಗೆ ಇದ್ದರೆ, ನಿಶ್ಚಯವಾಗಿ ನಾವು ಆರಾಧಿಸುವ ನಮ್ಮ ದೇವರು ಉರಿಯುವ ಬೆಂಕಿಯ ಕುಲುಮೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥರಾಗಿದ್ದಾರೆ. ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವರು.</verse>
				<verse number="18">ಆದರೆ ಒಂದು ವೇಳೆ ಅವರು ತಪ್ಪಿಸದಿದ್ದರೂ, ಅರಸನೇ ನಾವು ನಿನ್ನ ದೇವರುಗಳನ್ನು ಸೇವಿಸುವುದಿಲ್ಲವೆಂದೂ, ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲವೆಂದೂ ನಿನಗೆ ತಿಳಿದಿರಲಿ,” ಎಂದರು.</verse>
				<verse number="19">ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ, ಅವನ ಮುಖಭಾವವು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಆ ಕುಲುಮೆಯನ್ನು ಸಾಧಾರಣವಾದ ಉರಿಗಿಂತ ಏಳರಷ್ಟು ಹೆಚ್ಚಾಗಿ ಉರಿ ಹಾಕಬೇಕೆಂದು ಆಜ್ಞಾಪಿಸಿದನು.</verse>
				<verse number="20">ಇದಲ್ಲದೆ ತನ್ನ ಸೈನ್ಯದಲ್ಲಿರುವ ಅತ್ಯಂತ ಬಲಿಷ್ಠರಾದವರಿಗೆ ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಕಟ್ಟಿ, ಉರಿಯುವ ಬೆಂಕಿಯ ಕುಲುಮೆಯಲ್ಲಿ ಹಾಕಬೇಕೆಂದು ಆಜ್ಞಾಪಿಸಿದನು.</verse>
				<verse number="21">ಆಗ ಆ ಮನುಷ್ಯರು ತಮ್ಮ ಶಲ್ಯ, ಇಜಾರು, ಮುಂಡಾಸ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡವರಾಗಿರುವಾಗ, ಧಗಧಗನೆ ಉರಿಯುವ ಬೆಂಕಿಯ ಕುಲುಮೆಯಲ್ಲಿ ಅವರನ್ನು ಹಾಕಿದರು.</verse>
				<verse number="22">ಅರಸನ ಆಜ್ಞೆಯು ಅವಸರವಾಗಿಯೂ, ಕುಲುಮೆಯು ಬಹು ಉರಿಯಾಗಿಯೂ ಇದ್ದುದರಿಂದ, ಬೆಂಕಿಯ ಜ್ವಾಲೆಯು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರನ್ನು ಬೆಂಕಿಗೆ ಹಾಕಲು ಎತ್ತಿದ ಆ ಸೈನಿಕರನ್ನೇ ಸಂಹರಿಸಿತು.</verse>
				<verse number="23">ಶದ್ರಕ್, ಮೇಶಕ್, ಅಬೇದ್‌ನೆಗೋ ಈ ಮೂವರು ಕಟ್ಟಿನೊಂದಿಗೆ ಧಗಧಗನೆ ಉರಿಯುವ ಬೆಂಕಿಯ ಕುಲುಮೆಯ ನಡುವೆ ಬಿದ್ದರು.</verse>
				<verse number="24">ಆಗ ಅರಸನಾದ ನೆಬೂಕದ್ನೆಚ್ಚರನು ವಿಸ್ಮಯಗೊಂಡವನಾಗಿ ತ್ವರೆಯಾಗಿ ಎದ್ದು, ತನ್ನ ಆಲೋಚನಾಗಾರರ ಸಂಗಡ ಮಾತನಾಡಿ, “ನಾವು ಮೂವರು ಮನುಷ್ಯರನ್ನು ಕಟ್ಟಿ, ಬೆಂಕಿಯಲ್ಲಿ ಹಾಕಿದೆವಲ್ಲವೇ?” ಎಂದನು. ಆಗ ಅವರು ಅರಸನಿಗೆ, “ಅರಸನೇ, ಹೌದು ಸತ್ಯ,” ಎಂದು ಉತ್ತರಿಸಿದರು.</verse>
				<verse number="25">ಅರಸನು ಅವರಿಗೆ ಉತ್ತರವಾಗಿ, “ಇಗೋ, ಕಟ್ಟಿಲ್ಲದ ನಾಲ್ಕು ಮನುಷ್ಯರು ಬೆಂಕಿಯಲ್ಲಿ ನಡೆಯುತ್ತಿರುವುದನ್ನು ನೋಡುತ್ತೇನೆ. ಅವರಿಗೆ ಯಾವ ಹಾನಿಯೂ ಇಲ್ಲ. ಅಲ್ಲದೆ ನಾಲ್ಕನೆಯವರ ರೂಪವು ದೇವಪುತ್ರನ ಹಾಗಿದೆ,” ಎಂದು ಹೇಳಿದನು.</verse>
				<verse number="26">ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುತ್ತಿರುವ ಬೆಂಕಿಯ ಕುಲುಮೆಯ ಬಾಯಿಯ ಸಮೀಪಕ್ಕೆ ಬಂದು, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರೇ, ಮಹೋನ್ನತ ದೇವರ ಸೇವಕರೇ, ಹೊರಗೆ ಬನ್ನಿರಿ,” ಎಂದನು. ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರು ಬೆಂಕಿಯೊಳಗಿಂದ ಹೊರಗೆ ಬಂದರು.</verse>
				<verse number="27">ಆಗ ಉಪರಾಜರು, ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು, ಎಲ್ಲರೂ ಒಟ್ಟುಗೂಡಿ ಅವರನ್ನು ಸುತ್ತುವರಿದು, ಅವರ ಶರೀರದ ಮೇಲೆ ಬೆಂಕಿಯಿಂದ ಯಾವ ಅಪಾಯವಾಗಿರದೇ ಇರುವುದನ್ನೂ, ಅವರ ತಲೆಗೂದಲುಗಳಲ್ಲಿ ಒಂದಾದರೂ ಸುಡದಿರುವುದನ್ನೂ, ಅವರ ಅಂಗಿಗಳು ನಾಶವಾಗದಿರುವುದನ್ನೂ, ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವುದನ್ನೂ ಕಂಡರು.</verse>
				<verse number="28">ನೆಬೂಕದ್ನೆಚ್ಚರನು ಮಾತನಾಡಿ, “ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ. ಅವರು ತಮ್ಮ ದೂತನನ್ನು ಕಳುಹಿಸಿ, ತಮ್ಮ ಸೇವಕರನ್ನು ರಕ್ಷಿಸಿದ್ದಾರೆ. ಅವರು ದೇವರಲ್ಲಿ ನಂಬಿಕೆ ಇಟ್ಟರು. ಅರಸನ ಆಜ್ಞೆಯನ್ನು ಮೀರಿದರು. ಸ್ವಂತ ದೇವರನ್ನೇ ಹೊರತು ಬೇರೆ ಯಾವ ದೇವರನ್ನೂ ಸೇವಿಸದೆ, ಆರಾಧಿಸದೆ ಇರುವ ಹಾಗೆ ತಮ್ಮ ಪ್ರಾಣಗಳನ್ನು ಕೊಡಲೂ ಸಿದ್ಧರಾದರು.</verse>
				<verse number="29">ಆದ್ದರಿಂದ ಸಕಲ ಪ್ರಜೆ, ಜನಾಂಗ, ಭಾಷೆಗಳಲ್ಲಿ ಯಾರು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರ ದೇವರಿಗೆ ವಿರೋಧವಾಗಿ ದೂಷಣೆ ಮಾಡುವರೋ, ಅವರನ್ನು ತುಂಡುತುಂಡಾಗಿ ಮಾಡಿರಿ, ಅವರ ಮನೆಗಳು ತಿಪ್ಪೆ ಗುಂಡಿಗಳಾಗಿ ಮಾಡಿರಿ, ಎಂದು ನಾನು ರಾಜಾಜ್ಞೆಯನ್ನು ವಿಧಿಸುತ್ತೇನೆ. ಏಕೆಂದರೆ ಈ ವಿಧವಾಗಿ ರಕ್ಷಿಸುವ ದೇವರು ಇನ್ಯಾರೂ ಇರುವುದಿಲ್ಲ,” ಎಂದನು.</verse>
				<verse number="30">ಆಗ ಅರಸನು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬುವರನ್ನು ಬಾಬಿಲೋನ್ ಪ್ರಾಂತದಲ್ಲಿ ಉನ್ನತ ಪದವಿಗೆ ತಂದನು.</verse>
			</chapter>
			<chapter number="4">
				<verse number="1">ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ, ಜನಾಂಗಗಳಿಗೂ, ಭಾಷೆಯವರಿಗೂ, ನಿಮಗೆ ಶಾಂತಿಯು ಹೆಚ್ಚಾಗಲಿ.</verse>
				<verse number="2">ಮಹೋನ್ನತ ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂದು ನನಗೆ ವಿಹಿತವಾಗಿ ತೋರಿ ಬಂದಿದೆ.</verse>
				<verse number="3">ಅವರ ಸೂಚಕಕಾರ್ಯಗಳು ಎಷ್ಟೋ ದೊಡ್ಡವುಗಳು! ಅವರ ಅದ್ಭುತಗಳು ಪರಾಕ್ರಮವಾದವುಗಳು! ಅವರ ರಾಜ್ಯವು ನಿತ್ಯವಾದ ರಾಜ್ಯವು, ಅವರ ಆಡಳಿತವು ತಲತಲಾಂತರಕ್ಕೂ ಇರುವುದು.</verse>
				<verse number="4">ನೆಬೂಕದ್ನೆಚ್ಚರನು ಎಂಬ ನಾನು ನನ್ನ ಅರಮನೆಯಲ್ಲಿ ಸಂತೃಪ್ತನಾಗಿದ್ದೆ ಮತ್ತು ಸಮೃದ್ಧನಾಗಿದ್ದೆ.</verse>
				<verse number="5">ನನ್ನನ್ನು ಭಯಪಡಿಸುವಂಥಹ ಒಂದು ಕನಸನ್ನು ಕಂಡೆನು. ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ನನ್ನ ಮನಸ್ಸಿನಲ್ಲಿ ಹಾದುಹೋದ ಚಿತ್ರಗಳು ಮತ್ತು ದರ್ಶನಗಳು ನನ್ನನ್ನು ಭಯಭೀತಗೊಳಿಸಿದವು.</verse>
				<verse number="6">ಆದ್ದರಿಂದ ನನ್ನ ಕನಸಿನ ಅರ್ಥವನ್ನು ನನಗೆ ತಿಳಿಸುವುದಕ್ಕೋಸ್ಕರ ಬಾಬಿಲೋನಿನ ಸಕಲ ಜ್ಞಾನಿಗಳನ್ನು ನನ್ನ ಮುಂದೆ ತರಬೇಕೆಂದು ಆಜ್ಞಾಪಿಸಿದೆನು.</verse>
				<verse number="7">ಆಗ ಮಂತ್ರಗಾರರು, ಜೋತಿಷ್ಯರು, ಪಂಡಿತರು, ಶಕುನಗಾರರು ಒಳಗೆ ಬಂದರು. ನಾನು ಕನಸನ್ನು ಅವರಿಗೆ ತಿಳಿಸಿದೆನು. ಆದರೆ ಅವರು ಅದರ ಅರ್ಥವನ್ನು ನನಗೆ ತಿಳಿಸಲಿಲ್ಲ.</verse>
				<verse number="8">ಕೊನೆಗೆ ದಾನಿಯೇಲನು ನನ್ನ ಬಳಿಗೆ ಬಂದನು. ಅವನು ನನ್ನ ದೇವರ ಹೆಸರು ಸೇರಿರುವ ಬೇಲ್ತೆಶಚ್ಚರ್ ಎಂಬ ಅಡ್ಡಹೆಸರನ್ನು ಹೊಂದಿದ್ದನು. ಪರಿಶುದ್ಧ ದೇವರುಗಳ ಆತ್ಮವು ಅವನಲ್ಲಿತ್ತು. ಅವನಿಗೆ ನನ್ನ ಕನಸನ್ನು ಹೀಗೆ ತಿಳಿಸಿದೆ.</verse>
				<verse number="9">“ಮಂತ್ರಗಾರರಲ್ಲಿ ಪ್ರಾಮುಖ್ಯನಾದ ಬೇಲ್ತೆಶಚ್ಚರನೇ, ನಿನ್ನಲ್ಲಿ ಪರಿಶುದ್ಧ ದೇವರುಗಳ ಆತ್ಮವಿರುವುದೆಂದು ನಾನು ಬಲ್ಲೆನು. ಯಾವುದೇ ರಹಸ್ಯವು ನಿನಗೆ ಅಸಾಧ್ಯವಾದದ್ದಲ್ಲ. ಆದ್ದರಿಂದ ನಾನು ಕಂಡ ಕನಸಿನ ದರ್ಶನ, ಅದರ ಅರ್ಥವನ್ನೂ ನೀನು ನನಗೆ ಹೇಳು.</verse>
				<verse number="10">ಹಾಸಿಗೆಯಲ್ಲಿ ಮಲಗಿದ್ದಾಗ ನಾನು ಕಂಡ ದರ್ಶನಗಳು: ನಾನು ನೋಡಲಾಗಿ ಭೂಮಿಯ ಮಧ್ಯದಲ್ಲಿ ಒಂದು ಬಹಳ ಎತ್ತರವಾದ ಮರವು ಇತ್ತು.</verse>
				<verse number="11">ಆ ಮರವು ವಿಶಾಲವಾಗಿಯೂ, ಬಲವಾಗಿಯೂ ಬೆಳೆಯಿತು ಹಾಗೂ ಅದು ಆಕಾಶವನ್ನು ಮುಟ್ಟುತ್ತಿತ್ತು. ಭೂಲೋಕದ ಕಟ್ಟಕಡೆಯವರೆಗೆ ಅದು ಕಾಣಿಸುತ್ತಿತ್ತು.</verse>
				<verse number="12">ಅದರ ಎಲೆಗಳು ಅಂದವಾಗಿದ್ದವು. ಅದರ ಫಲವು ಬಹಳವಾಗಿತ್ತು. ಅದರಲ್ಲಿ ಎಲ್ಲರಿಗೂ ಆಹಾರವಿತ್ತು. ಕಾಡುಮೃಗಗಳಿಗೆ ಅದರ ಕೆಳಗೆ ನೆರಳಲ್ಲಿ ಆಶ್ರಯ ದೊರಕುತ್ತಿತ್ತು. ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು. ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ದೊರಕುತ್ತಿತ್ತು.</verse>
				<verse number="13">“ನನ್ನ ಹಾಸಿಗೆಯ ಮೇಲೆ ಮಲಗಿದ್ದಾಗ, ದರ್ಶನಗಳನ್ನು ನಾನು ನೋಡಲಾಗಿ, ಒಬ್ಬ ದೂತನಾದ ಪರಿಶುದ್ಧನೊಬ್ಬನು ಪರಲೋಕದಿಂದ ಇಳಿದು ಬಂದನು.</verse>
				<verse number="14">ಅವನು ಗಟ್ಟಿಯಾಗಿ ಕೂಗಿ: ‘ಮರವನ್ನು ಕಡಿಯಿರಿ. ಅದರ ಕೊಂಬೆಗಳನ್ನು ಕತ್ತರಿಸಿ, ಅದರ ಎಲೆಗಳನ್ನು ಉದುರಿಸಿ, ಅದರ ಫಲವನ್ನು ಚದುರಿಸಿಬಿಡಿರಿ. ಮೃಗಗಳು ಅದರ ಕೆಳಗಿನಿಂದಲೂ, ಪಕ್ಷಿಗಳು ಅದರ ಕೊಂಬೆಗಳಿಂದಲೂ ಹೋಗಿಬಿಡಲಿ.</verse>
				<verse number="15">ಆದರೆ ಅದರ ಬುಡವೂ, ಬೇರೂ, ಕಬ್ಬಿಣ, ಕಂಚಿನ ಕಟ್ಟುಳ್ಳದ್ದಾಗಿ ನೆಲದಲ್ಲಿ ಹೊಲದ ಹುಲ್ಲಿನಲ್ಲಿ ಇರಲಿ. “ ‘ಅವನು ಆಕಾಶದ ಮಂಜಿನಿಂದ ತೇವವಾಗಲಿ, ಭೂಮಿಯ ಗಿಡಗಳ ಮಧ್ಯದಲ್ಲಿರುವ ಮೃಗಗಳೊಂದಿಗೆ ಅವನು ವಾಸಿಸಲಿ.</verse>
				<verse number="16">ಅವನಿಗೆ ಏಳು ವರ್ಷಕಾಲ, ಮನುಷ್ಯ ಹೃದಯ ಹೋಗಿ ಮೃಗದ ಹೃದಯ ಬರಲಿ.</verse>
				<verse number="17">“ ‘ಈ ತೀರ್ಮಾನವು ದೂತರಿಂದ ಪ್ರಕಟವಾಯಿತು, ಪರಿಶುದ್ಧರು ಅಂತಿಮ ನಿರ್ಣಯವನ್ನು ಘೋಷಿಸುವರು, ಮಹೋನ್ನತರು ಜನರ ರಾಜ್ಯಗಳ ಮೇಲೆ ಸರ್ವಾಧಿಕಾರಿಯಾಗಿರುವರೆಂದೂ, ರಾಜ್ಯಗಳನ್ನು ತಮ್ಮ ಮನಸ್ಸಿಗೆ ಬಂದವರಿಗೆ ಕೊಡುವರೆಂದೂ, ಅವುಗಳ ಮೇಲೆ ಕೀಳಾದವರನ್ನು ನೇಮಿಸುವರೆಂದೂ ಇದರಿಂದ ಜೀವಿತರು ತಿಳಿದುಕೊಳ್ಳುವರು.’</verse>
				<verse number="18">“ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೇಲ್ತೆಶಚ್ಚರನೆಂಬ ನೀನು ಅದರ ಅರ್ಥವನ್ನು ಹೇಳು. ಏಕೆಂದರೆ ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿಶುದ್ಧ ದೇವರುಗಳ ಆತ್ಮವು ಇರುವುದರಿಂದ ನೀನು ಹೇಳಲು ಶಕ್ತನು,” ಎಂದನು.</verse>
				<verse number="19">ಆಗ ಬೇಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ, “ಬೇಲ್ತೆಶಚ್ಚರನೇ, ಕನಸಾದರೂ, ಅದರ ಅರ್ಥವಾದರೂ ನಿನ್ನನ್ನು ಕಳವಳಪಡಿಸದಿರಲಿ,” ಎಂದನು. ಬೇಲ್ತೆಶಚ್ಚರನು ಉತ್ತರವಾಗಿ, “ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ, ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.</verse>
				<verse number="20">ನೀನು ಕಂಡ ಮರವು ಬೆಳೆದು, ಬಲಗೊಂಡು ಆಕಾಶದ ತುದಿಯನ್ನು ಮುಟ್ಟಿ, ಇಡೀ ಭೂಮಿಗೆ ಗೋಚರಿಸುತ್ತಿತ್ತು.</verse>
				<verse number="21">ಅದರ ಎಲೆಗಳು ಅಂದವಾಗಿದ್ದು, ಫಲವು ಬಹಳವಾಗಿತ್ತು. ಅದರಲ್ಲಿ ಎಲ್ಲರಿಗೂ ಆಹಾರ ಇತ್ತು. ಅದರ ಕೆಳಗೆ ಕಾಡುಮೃಗಗಳು ವಾಸಮಾಡಿದ್ದವು. ಅದರ ಕೊಂಬೆಗಳಲ್ಲಿ ಆಕಾಶದ ಪಕ್ಷಿಗಳು ನಿವಾಸ ಮಾಡಿದ್ದವು.</verse>
				<verse number="22">ಅರಸನೇ, ಆ ಮರವು ನೀನೇ ಆಗಿರುವೆ. ನೀನು ಬೆಳೆದು ಬಲವಾಗಿರುವೆ. ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ, ನಿನ್ನ ಅಧಿಕಾರವು ಭೂಮಿಯ ಅಂತ್ಯದವರೆಗೂ ಮುಟ್ಟುವುದು.</verse>
				<verse number="23">“ಪರಿಶುದ್ಧನಾದ ಒಬ್ಬನು ಪರಲೋಕದಿಂದ ಇಳಿದುಬಂದು, ‘ಮರವನ್ನು ಕಡಿದು ನಾಶಮಾಡಿರಿ. ಆದರೆ ಅದರ ಬೇರಿನ ಮೋಟನ್ನು ನೆಲದಲ್ಲಿ ಉಳಿಸಿ, ಮೋಟನ್ನು ಕಬ್ಬಿಣ ಮತ್ತು ಕಂಚುಗಳಿಂದ ಕಟ್ಟಿ, ಬಯಲಿನ ಎಳೆಯ ಹುಲ್ಲಿನಲ್ಲಿಯೂ, ಬೇರುಗಳನ್ನು ಭೂಮಿಯಲ್ಲಿಯೂ ಬಿಡಿರಿ. ಅವನು ಆಕಾಶದ ಮಂಜಿನಿಂದ ತೇವವಾಗಲಿ. ಏಳು ಕಾಲಗಳು ಕಳೆಯುವ ತನಕ ಅವನು ಕಾಡುಮೃಗಗಳ ಹಾಗೆ ಜೀವಿಸಲಿ, ಎಂದು ಸಾರುವುದನ್ನು ಅರಸನಾದ ನೀನು ನೋಡಿದೆಯಲ್ಲಾ.’</verse>
				<verse number="24">“ಅರಸನೇ, ಇದರ ವ್ಯಾಖ್ಯಾನವು ಏನೆಂದರೆ, ನನ್ನ ಒಡೆಯನಾದ ಅರಸನ ಮೇಲೆ ಬಂದಂಥ ಮಹೋನ್ನತನ ನಿರ್ಣಯವು ಹೀಗಿದೆ:</verse>
				<verse number="25">ನಿನ್ನನ್ನು ಮನುಷ್ಯರೊಳಗಿಂದ ಬಹಿಷ್ಕರಿಸಿ ಬಿಡುವರು. ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವುದು. ಪಶುಗಳಂತೆ ನೀನು ಹುಲ್ಲನ್ನು ತಿನ್ನುವೆ. ಆಕಾಶದ ಮಂಜಿನಿಂದ ನಿನ್ನನ್ನು ತೋಯಿಸುವುದು. ಮಹೋನ್ನತರು ಮನುಷ್ಯರ ರಾಜ್ಯವನ್ನು ಆಳುವರೆಂದೂ, ತಮಗೆ ಬೇಕಾದವರಿಗೆ ಅದನ್ನು ಕೊಡುತ್ತಾರೆಂದೂ ನೀನು ತಿಳಿಯುವವರೆಗೂ, ಆ ಏಳು ಕಾಲಗಳು ಕಳೆದುಹೋಗುವುವು.</verse>
				<verse number="26">ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂಬ ಆಜ್ಞೆಯ ಅರ್ಥ ಏನೆಂದರೆ, ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಪುನಃಸ್ಥಾಪನೆಯಾಗುವುದು.</verse>
				<verse number="27">ಆದ್ದರಿಂದ ಅರಸನೇ, ನನ್ನ ಆಲೋಚನೆಯು ನಿನಗೆ ಸರಿಯಾದದ್ದಾಗಿರಲಿ. ಸರಿಯಾದದ್ದನ್ನು ಮಾಡುವುದರಿಂದ ನಿನ್ನ ಪಾಪಗಳನ್ನು ಬಿಟ್ಟುಬಿಡು. ದಬ್ಬಾಳಿಕೆಯಾದವರಿಗೆ ದಯೆ ತೋರುವುದರಿಂದ ನಿನ್ನ ದುಷ್ಟತ್ವವನ್ನು ಬಿಟ್ಟುಬಿಡು. ಹೀಗಾದರೆ ಒಂದು ವೇಳೆ ನಿನ್ನ ಸಮೃದ್ಧಿ ಮುಂದುವರಿಯುವುದು.”</verse>
				<verse number="28">ಅರಸನಾದ ನೆಬೂಕದ್ನೆಚ್ಚರನಿಗೆ ಇದೆಲ್ಲವೂ ಸಂಭವಿಸಿತು.</verse>
				<verse number="29">ಹನ್ನೆರಡು ತಿಂಗಳಾದ ಮೇಲೆ ಅರಸನು ಬಾಬಿಲೋನಿನ ರಾಜ್ಯದ ಅರಮನೆಯ ಮೇಲ್ಗಡೆ ತಿರುಗಾಡಿದನು.</verse>
				<verse number="30">ಆಗ ಅರಸನು, “ನಾನು ನನ್ನ ಪರಾಕ್ರಮದ ಬಲದಿಂದಲೂ, ನನ್ನ ಮಹಿಮೆಯ ಕೀರ್ತಿಗಾಗಿಯೂ ಕಟ್ಟಿಸಿದ ಮಹಾ ಬಾಬಿಲೋನು ಇದಲ್ಲವೇ?” ಎಂದನು.</verse>
				<verse number="31">ಈ ಮಾತು ಅರಸನ ಬಾಯಿಯಲ್ಲಿ ಇರುವಾಗಲೇ ಪರಲೋಕದಿಂದ ಒಂದು ಧ್ವನಿ ಉಂಟಾಯಿತು: “ಅರಸನಾದ ನೆಬೂಕದ್ನೆಚ್ಚರನೇ, ನಿನ್ನ ವಿಷಯವಾದ ದೈವೋಕ್ತಿ ಏನೆಂದರೆ: ನಿನ್ನ ರಾಜ್ಯವು ನಿನ್ನಿಂದ ತೆಗೆಯಲಾಗುವುದು.</verse>
				<verse number="32">ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ನೀನು ದನಗಳ ಹಾಗೆ ಹುಲ್ಲನ್ನು ಮೇಯುವೆ. ಮಹೋನ್ನತರು ಮನುಷ್ಯರ ರಾಜ್ಯವನ್ನಾಳುವರೆಂದು ತಮ್ಮ ಮನಸ್ಸಿಗೆ ಸರಿ ಬಂದವರಿಗೆ ಅದನ್ನು ಕೊಡುವೆರೆಂದು ನೀನು ತಿಳಿಯುವಷ್ಟರಲ್ಲಿ ಏಳು ಕಾಲಗಳು ನಿನ್ನನ್ನು ದಾಟಿ ಹೋಗುವುವು,” ಎಂಬುದೇ.</verse>
				<verse number="33">ಆ ನುಡಿ ಕೂಡಲೆ ನೆರವೇರಿತು. ನೆಬೂಕದ್ನೆಚ್ಚರನು ಸಮಾಜದಿಂದ ಬಹಿಷ್ಕೃತನಾದನು. ದನಗಳಂತೆ ಹುಲ್ಲು ಮೇಯುತ್ತಿದ್ದನು. ಕೊನೆಗೆ ಅವನ ಕೂದಲು ಹದ್ದಿನ ಗರಿಗಳಂತೆಯೂ, ಅವನ ಉಗುರುಗಳು ಪಕ್ಷಿಗಳ ಉಗುರುಗಳ ಹಾಗೆ ಬೆಳೆಯುವವರೆಗೆ ಅವನ ಶರೀರವು ಆಕಾಶದ ಮಂಜಿನಿಂದ ತೇವವಾಯಿತು.</verse>
				<verse number="34">ಆ ಸಮಯದ ಅಂತ್ಯದಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರಲೋಕದ ಕಡೆಗೆ ಎತ್ತಿದೆನು. ನನ್ನ ತಿಳುವಳಿಕೆ ನನಗೆ ತಿರುಗಿ ಬಂತು. ಆಗ ನಾನು ಮಹೋನ್ನತರನ್ನು ಕೊಂಡಾಡಿದೆನು. ಸದಾಕಾಲಕ್ಕೂ ಇರುವವರಾದ ಅವರನ್ನು ಗೌರವಿಸಿ, ಮಹಿಮೆ ಪಡಿಸಿದೆನು. ಅವರ ಆಡಳಿತವು ನಿತ್ಯವಾದ ಆಡಳಿತವಾಗಿದೆ. ಅವರ ರಾಜ್ಯವು ತಲತಲಾಂತರಕ್ಕೂ ಇರುವುದು.</verse>
				<verse number="35">ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ ಯಾವ ಮಹತ್ವವಿಲ್ಲದೆ ಶೂನ್ಯರಾಗಿದ್ದಾರೆ. ದೇವರು ಪರಲೋಕದ ಸೈನ್ಯದಲ್ಲಿಯೂ, ಭೂನಿವಾಸಿಗಳಲ್ಲಿಯೂ ತಮ್ಮ ಚಿತ್ತದ ಪ್ರಕಾರವೇ ಮಾಡುತ್ತಾರೆ. ಯಾರೂ ಅವರ ಹಸ್ತವನ್ನು ಹಿಂತೆಗೆಯಲಾರರು. “ನೀವು ಏನು ಮಾಡುತ್ತಿರುವಿರಿ?” ಎಂದು ದೇವರನ್ನು ಯಾರೂ ಕೇಳಲಾರರು.</verse>
				<verse number="36">ಇದೇ ಸಮಯದಲ್ಲಿ ನನ್ನ ಬುದ್ಧಿಯು ನನಗೆ ತಿರುಗಿ ಬಂತು. ನನ್ನ ರಾಜ್ಯದ ಮಹಿಮೆಗಾಗಿ ನನ್ನ ಘನವೂ, ನನ್ನ ತೇಜಸ್ಸೂ ತಿರುಗಿ ಬಂದವು. ನನ್ನ ಆಲೋಚನಾಗಾರರೂ, ನನ್ನ ಪ್ರಭುಗಳೂ ನನ್ನನ್ನು ಹುಡುಕಿ ಬಂದರು. ನಾನು ನನ್ನ ರಾಜ್ಯದಲ್ಲಿ ಪುನಃ ನೆಲೆಗೊಂಡೆನು. ಮೊದಲಿಗಿಂತಲೂ ನನಗೆ ಹೆಚ್ಚಿನ ಪ್ರತಿಭೆ ದೊರೆಯಿತು.</verse>
				<verse number="37">ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.</verse>
			</chapter>
			<chapter number="5">
				<verse number="1">ಅರಸನಾದ ಬೇಲ್ಯಚ್ಚರನು ತನ್ನ ಪ್ರಧಾನರಲ್ಲಿ ಸಾವಿರ ಮಂದಿಗೆ ದೊಡ್ಡ ಔತಣವನ್ನು ಮಾಡಿಸಿ, ಅವರೊಂದಿಗೆ ಅವನು ದ್ರಾಕ್ಷಾರಸವನ್ನು ಕುಡಿದನು.</verse>
				<verse number="2">ಬೇಲ್ಯಚ್ಚರನು ತನ್ನ ದ್ರಾಕ್ಷಾರಸವನ್ನು ಕುಡಿಯುತ್ತಿರುವಾಗ, ತನ್ನ ತಂದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದೊಳಗಿಂದ ತಂದ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನು ತಂದು, ಅದರಲ್ಲಿ ಅರಸನು ಮತ್ತು ಪ್ರಧಾನರು, ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವಂತೆ ಆಜ್ಞಾಪಿಸಿದನು.</verse>
				<verse number="3">ಆಗ ಅವರು ಯೆರೂಸಲೇಮಿನ ದೇವರ ಆಲಯದೊಳಗಿಂದ ತಂದಿದ್ದ ಬಂಗಾರದ ಪಾತ್ರೆಗಳನ್ನು ತಂದರು. ಅರಸನೂ ಅವರ ಪ್ರಧಾನರೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು.</verse>
				<verse number="4">ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಸ್ತುತಿಸಿದರು.</verse>
				<verse number="5">ಕೂಡಲೇ ಒಬ್ಬ ಮನುಷ್ಯನ ಕೈಬೆರಳುಗಳು ಬಂದು ದೀಪಸ್ತಂಭಕ್ಕೆ ಎದುರಾಗಿ ಅರಮನೆಯ ಗೋಡೆಯ ಮೇಲೆ ಬರೆಯಲಾರಂಭಿಸಿದವು. ಅರಸನು ಆ ಬರೆಯುವ ಕೈಭಾಗವನ್ನು ನೋಡಿದನು.</verse>
				<verse number="6">ಆಗ ಅರಸನ ಮುಖವು ಕಳೆಗುಂದಿತು. ಅವನು ತುಂಬಾ ಭಯಭೀತನಾದನು. ಅವನ ಸೊಂಟದ ಕೀಲುಗಳು ಸಡಿಲಗೊಂಡವು. ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.</verse>
				<verse number="7">ಅರಸನು ಗಟ್ಟಿಯಾಗಿ ಕಿರುಚಿ ಜ್ಯೋತಿಷ್ಯರನ್ನೂ, ಪಂಡಿತರನ್ನೂ, ಶಕುನ ಹೇಳುವವರನ್ನೂ ಕರೆಸಿ, ಬಾಬಿಲೋನಿನ ಜ್ಞಾನಿಗಳಿಗೆ, “ಯಾರು ಈ ಬರಹವನ್ನು ಓದಿ, ಅದರ ಅರ್ಥವನ್ನು ನನಗೆ ತಿಳಿಸುವರೋ, ಅವರಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ರಾಜ್ಯದ ಮೂರನೆಯ ಅಧಿಕಾರಿಯಾಗಿ ಮಾಡುವೆನು,” ಎಂದು ಹೇಳಿದನು.</verse>
				<verse number="8">ಆಗ ಅರಸನ ಎಲ್ಲಾ ಜ್ಞಾನಿಗಳು ಒಳಗೆ ಬಂದರು. ಆದರೆ ಆ ಬರಹವನ್ನು ಓದಲೂ, ಅದರ ಅರ್ಥವನ್ನು ಅರಸನಿಗೆ ತಿಳಿಸಲೂ ಅವರಿಗೆ ಆಗದೆ ಹೋಯಿತು.</verse>
				<verse number="9">ಆಗ ಅರಸನಾದ ಬೇಲ್ಯಚ್ಚರನು ಬಹಳವಾಗಿ ಕಳವಳಪಟ್ಟನು. ಅವನ ಮುಖವು ಕಳೆಗುಂದಿತು. ಅವನ ಪ್ರಧಾನರು ಭಯಗೊಂಡರು.</verse>
				<verse number="10">ಆಗ ಅರಸನ ಮತ್ತು ಅವನ ಪ್ರಧಾನರ ಮಾತುಗಳನ್ನು ಕೇಳಿ ರಾಣಿಯು ಔತಣದ ಮನೆಗೆ ಬಂದಳು. ಆಗ ಮಾತನಾಡಿ, “ಅರಸನೇ, ನಿರಂತರವಾಗಿ ಬಾಳು! ನಿನ್ನ ಆಲೋಚನೆಗಳು ನಿನ್ನನ್ನು ಕಳವಳಪಡಿಸದಿರಲಿ. ನಿನ್ನ ಮುಖವು ಕಳೆಗುಂದದಿರಲಿ!</verse>
				<verse number="11">ನಿನ್ನ ರಾಜ್ಯದಲ್ಲಿ ಪರಿಶುದ್ಧ ದೇವರುಗಳ ಆತ್ಮವುಳ್ಳ ಒಬ್ಬ ಮನುಷ್ಯನಿದ್ದಾನೆ. ದೇವರುಗಳ ಜ್ಞಾನಕ್ಕೆ ಸಮಾನವಾದ ಜ್ಞಾನವೂ, ವಿವೇಕವೂ, ಬುದ್ಧಿಯೂ, ಪ್ರಕಾಶವೂ ನಿನ್ನ ತಂದೆಯ ಕಾಲದಲ್ಲಿ ಅವನೊಳಗೆ ಕಂಡುಬಂದವು. ನಿನ್ನ ತಂದೆ ನೆಬೂಕದ್ನೆಚ್ಚರ ಅರಸನು ಅವನನ್ನು ಮಂತ್ರಗಾರರಿಗೂ, ಜ್ಯೋತಿಷ್ಯರಿಗೂ, ಪಂಡಿತರಿಗೂ, ಶಕುನಗಾರರಿಗೂ ಅಧಿಕಾರಿಯನ್ನಾಗಿ ನೇಮಿಸಿದನು.</verse>
				<verse number="12">ಏಕೆಂದರೆ ಬೇಲ್ತೆಶಚ್ಚರನೆಂಬ ಹೆಸರನ್ನು ಅರಸನಿಂದ ಪಡೆದ ಆ ದಾನಿಯೇಲನಲ್ಲಿ ಕನಸುಗಳ ಅರ್ಥವನ್ನು ಹೇಳುವುದಕ್ಕೂ, ಕಠಿಣವಾದ ಸಂಗತಿಗಳನ್ನು ತಿಳಿಸುವುದಕ್ಕೂ, ಒಗಟುಗಳನ್ನು ವಿವರಿಸುವುದಕ್ಕೂ ಕಷ್ಟಕರವಾದ ಸಮಸ್ಯೆಗಳನ್ನು ಪರಿಹರಿಸುವುದಕ್ಕೂ ಉತ್ತಮ ಆತ್ಮವೂ, ಜ್ಞಾನವೂ, ವಿವೇಕವೂ ಸಿಕ್ಕಿದವು. ಈಗ ಆ ದಾನಿಯೇಲನನ್ನು ಕರೆಯಿಸಿದರೆ, ಅವನು ಈ ಬರಹದ ಅರ್ಥವನ್ನು ವಿವರಿಸುವನು,” ಎಂದಳು.</verse>
				<verse number="13">ಆಗ ದಾನಿಯೇಲನನ್ನು ಅರಸನ ಮುಂದೆ ತಂದರು. ಅರಸನು ದಾನಿಯೇಲನಿಗೆ, “ಅರಸನಾದ ನನ್ನ ತಂದೆಯು ಯೆಹೂದದಿಂದ ತಂದ ಯೆಹೂದದ ಸೆರೆಯವರಲ್ಲಿ ಒಬ್ಬನಾದ ದಾನಿಯೇಲನು ನೀನೋ?</verse>
				<verse number="14">ನಿನ್ನಲ್ಲಿ ದೇವರುಗಳ ಆತ್ಮ ಉಂಟೆಂದೂ, ಒಳನೋಟ, ಬುದ್ಧಿಯೂ, ಉತ್ತಮ ಜ್ಞಾನವೂ ನಿನ್ನಲ್ಲಿ ಇವೆ ಎಂದೂ ನಿನ್ನ ವಿಷಯವಾಗಿ ಕೇಳಿದ್ದೇನೆ.</verse>
				<verse number="15">ಈಗ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ಜ್ಯೋತಿಷ್ಯರಾದ ಜ್ಞಾನಿಗಳು ನನ್ನ ಮುಂದೆ ಬಂದಿದ್ದಾರೆ. ಆದರೆ ಇದರ ಅರ್ಥವನ್ನು ಹೇಳಲಾರದೆ ಹೋದರು.</verse>
				<verse number="16">ಈಗ ನೀನು ಅರ್ಥಗಳನ್ನು ವಿವರಿಸಿ, ಕಷ್ಟಕರವಾದ ಸಮಸ್ಯೆಗಳನ್ನು ಬಗೆಹರಿಸಲು ಸಮರ್ಥನೆಂದು ನಾನು ನಿನ್ನ ವಿಷಯವಾಗಿ ಕೇಳಿದ್ದೇನೆ. ಹೀಗಾದರೆ ಈ ಬರಹವನ್ನು ಓದುವುದಕ್ಕೂ, ಅದರ ಅರ್ಥವನ್ನು ತಿಳಿಸುವುದಕ್ಕೂ ನಿನ್ನಿಂದ ಸಾಧ್ಯವಾದರೆ, ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ರಾಜ್ಯದ ಮೂರನೆಯ ಅಧಿಕಾರಿಯನ್ನಾಗಿ ನೇಮಿಸುವೆನು,” ಎಂದು ಹೇಳಿದನು.</verse>
				<verse number="17">ಆಗ ದಾನಿಯೇಲನು ಅರಸನ ಮುಂದೆ, “ನಿನ್ನ ದಾನಗಳು ನಿನಗಿರಲಿ, ನಿನ್ನ ಬಹುಮಾನಗಳು ಮತ್ತೊಬ್ಬರಿಗೆ ದೊರಕಲಿ. ಆದರೂ ನಾನು ಅರಸನಿಗಾಗಿ ಬರಹವನ್ನು ಓದಿ, ಅದರ ಅರ್ಥವನ್ನು ಅರಸನಿಗೆ ತಿಳಿಸುವೆನು,” ಎಂದನು.</verse>
				<verse number="18">“ಅರಸನೇ, ಮಹೋನ್ನತರಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ಸಾರ್ವಭೌಮತ್ವವನ್ನೂ, ಮಹತ್ತನ್ನೂ, ಕೀರ್ತಿಯನ್ನೂ, ಘನವನ್ನೂ ಕೊಟ್ಟರು.</verse>
				<verse number="19">ಅವರು ಅವನಿಗೆ ಕೊಟ್ಟ ಮಹತ್ತಿನ ನಿಮಿತ್ತ ಸಕಲ ಪ್ರಜೆಗಳೂ, ಜನಾಂಗಗಳೂ, ಭಾಷೆಯವರೂ ಅವನ ಮುಂದೆ ಹೆದರಿ ನಡುಗಿದರು. ತನಗೆ ಬೇಕಾದವರನ್ನು ಬದುಕಿಸಿ ಬೇಡವಾದವರನ್ನು ಕೊಂದನು. ಇಷ್ಟವಿದ್ದವರನ್ನು ಸುಸ್ಥಿತಿಗೆ ಏರಿಸಿ, ಇಷ್ಟವಿಲ್ಲದವರನ್ನು ಕೆಳಕ್ಕಿಳಿಸಿದನು.</verse>
				<verse number="20">ಆದರೆ ಅವನ ಹೃದಯವು ಹೆಮ್ಮೆಯಿಂದ ಉಬ್ಬಿಕೊಂಡಾಗ ಮತ್ತು ಅವನ ಹೃದಯವು ಗಟ್ಟಿಯಾದಾಗ, ಅವನನ್ನು ಸಿಂಹಾಸನದಿಂದ ತೆಗೆದುಹಾಕಲಾಯಿತು ಮತ್ತು ಅವನ ಪ್ರತಿಷ್ಠೆಯನ್ನು ಕಿತ್ತುಕೊಳ್ಳಲಾಯಿತು.</verse>
				<verse number="21">ಅವನು ಮಾನವ ಸಮಾಜದಿಂದ ಬಹಿಷ್ಕೃತನಾದನು. ಮಹೋನ್ನತರಾದ ದೇವರು ಮನುಷ್ಯರ ರಾಜ್ಯವನ್ನು ಆಳುತ್ತಾರೆಂದೂ, ಅವರು ತಮಗೆ ಬೇಕಾದವರನ್ನು ಅದಕ್ಕೆ ನೇಮಿಸುತ್ತಾರೆಂದೂ ತಿಳಿಯುವ ತನಕ ಅವನು ಮೃಗಬುದ್ಧಿಯುಳ್ಳವನಾಗಿದ್ದನು. ಅವನ ನಿವಾಸವು ಕಾಡುಕತ್ತೆಗಳ ಸಂಗಡ ಇತ್ತು. ಅವನು ದನಗಳಂತೆ ಹುಲ್ಲನ್ನು ಮೇಯುತ್ತಿದ್ದನು. ಅವನ ಶರೀರ ಆಕಾಶದ ಮಂಜಿನಿಂದ ತೇವವಾಯಿತು.</verse>
				<verse number="22">“ಅವನ ಮಗ ಬೇಲ್ಯಚ್ಚರನೇ, ನೀನು ಇದನ್ನೆಲ್ಲಾ ತಿಳಿದುಕೊಂಡಿದ್ದರೂ ತಗ್ಗಿಸಿಕೊಳ್ಳದೆ</verse>
				<verse number="23">ಪರಲೋಕದ ಒಡೆಯನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ. ಅವರ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು. ಆಗ ನೀನು ನಿನ್ನ ಪ್ರಧಾನರು ಮತ್ತು ಪತ್ನಿಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು, ಬುದ್ಧಿ, ಕಣ್ಣು ಕಿವಿಗಳಿಲ್ಲದ ಬೆಳ್ಳಿಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿರಿ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನದಲ್ಲಿವೆಯೋ, ಆ ದೇವರನ್ನು ಘನಪಡಿಸಲೇ ಇಲ್ಲ.</verse>
				<verse number="24">ಅದಕ್ಕಾಗಿಯೇ ಆತನು ಕಳುಹಿಸಿದ ಕೈಯ ಭಾಗವು ಬಂದು ಆ ಬರಹವನ್ನು ಬರೆದಿದೆ.</verse>
				<verse number="25">“ಆ ಬರಹವು ಏನೆಂದರೆ: ಮೆನೇ ಮೆನೇ, ತೆಕೇಲ್, ಉಫರ್ಸಿನ್.</verse>
				<verse number="26">“ಇದರ ಅರ್ಥವು ಹೀಗಿದೆ: “ ಮೆನೇ ಎಂದರೆ ದೇವರು ನಿನ್ನ ಆಳ್ವಿಕೆಯ ಕಾಲಾವಧಿಯನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾರೆ.</verse>
				<verse number="27">“ ತೆಕೇಲ್ ಎಂದರೆ ನಿನ್ನನ್ನು ತಕ್ಕಡಿಯಲ್ಲಿ ಹಾಕಿ ನೋಡಲು ನೀನು ಕೊರತೆಯುಳ್ಳವನಾಗಿ ಕಂಡುಬಂದಿರುವೆ.</verse>
				<verse number="28">“ಫರ್ಸಿನ್ ಎಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯರಿಗೂ, ಪಾರಸಿಯರಿಗೂ ಕೊಡಲಾಗಿದೆ,” ಎಂಬದಾಗಿ ಅರಿಕೆಮಾಡಿದನು.</verse>
				<verse number="29">ಆಗ ಬೇಲ್ಯಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಇವನು ರಾಜ್ಯದ ಮೂರನೇ ಉನ್ನತ ಅಧಿಕಾರಿಗಳಲ್ಲಿ ಒಬ್ಬನೆಂದು ಸಾರಿದನು.</verse>
				<verse number="30">ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಹತನಾದನು.</verse>
				<verse number="31">ಮೇದ್ಯನಾದ ದಾರ್ಯಾವೆಷನು ತನ್ನ ಅರವತ್ತೆರಡು ವಯಸ್ಸಿನಲ್ಲಿ ರಾಜ್ಯವನ್ನು ವಶಪಡಿಸಿಕೊಂಡನು.</verse>
			</chapter>
			<chapter number="6">
				<verse number="1">ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವುದಕ್ಕೋಸ್ಕರ ನೂರಿಪ್ಪತ್ತು ಮಂದಿ ಉಪರಾಜರನ್ನು ಆಯಾ ರಾಜ್ಯದ ಆಯಾ ಭಾಗಗಳ ಮೇಲೆ ಆಳಲು ಇರಿಸಿದನು.</verse>
				<verse number="2">ಇವರ ಮೇಲೆ ಮೂವರು ದೇಶಾಧಿಪತಿಗಳನ್ನು ನೇಮಿಸುವುದು ದಾರ್ಯಾವೆಷನಿಗೆ ಹಿತವೆಂದು ತೋಚಿತು. ಇದರಿಂದ ರಾಜನಿಗೆ ಯಾವ ನಷ್ಟವಾಗದಂತೆ ಲೆಕ್ಕ ಒಪ್ಪಿಸಲಾಯಿತು. ಇವರಲ್ಲಿ ದಾನಿಯೇಲನು ಒಬ್ಬನಾಗಿದ್ದನು.</verse>
				<verse number="3">ಈ ದಾನಿಯೇಲನಲ್ಲಿ ಉತ್ತಮ ಯೋಗ್ಯತೆಗಳು ಇದ್ದುದರಿಂದ ಅವನು ಉಪರಾಜರಿಗಿಂತಲೂ, ದೇಶಾಧಿಪತಿಗಿಂತಲೂ ಶ್ರೇಷ್ಠನಾಗಿದ್ದನು. ಈ ಕಾರಣದಿಂದ ಅರಸನು ಅವನನ್ನು ಸಮಸ್ತ ರಾಜ್ಯದ ಮೇಲೆ ಅಧಿಕಾರಿಯನ್ನಾಗಿ ನೇಮಿಸಲು ಉದ್ದೇಶಿಸಿದ್ದನು.</verse>
				<verse number="4">ಹೀಗಿರಲು ಉಪರಾಜರೂ, ದೇಶಾಧಿಪತಿಗಳೂ ರಾಜ್ಯಭಾರದ ವಿಷಯವಾಗಿ ದಾನಿಯೇಲನ ವಿರೋಧವಾಗಿ ತಪ್ಪು ಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ಅವನು ನಂಬಿಗಸ್ತನಾಗಿದ್ದು ಅವನಲ್ಲಿ ತಪ್ಪು ನಿರ್ಲಕ್ಷ್ಯತೆ ಇಲ್ಲದಿರುವುದರಿಂದ ಅವರಿಗೆ ಯಾವ ತಪ್ಪೂ ಸಿಗಲಾರದೆ ಹೋಯಿತು.</verse>
				<verse number="5">ಆಗ ಆ ಮನುಷ್ಯರು, “ಈ ದಾನಿಯೇಲನ ಮೇಲೆ ತಪ್ಪು ಹೊರಿಸಬೇಕಾದರೆ ಇವನ ದೇವರ ಹಾಗೂ ಧರ್ಮದ ಮೂಲಕವೇ ಹೊರತು ಇನ್ನಾವುದರಲ್ಲೂ ನಮಗೆ ಅವಕಾಶ ದೊರಕದು,” ಎಂದುಕೊಂಡರು.</verse>
				<verse number="6">ಆಗ ಉಪರಾಜರೂ, ದೇಶಾಧಿಪತಿಯೂ ಅರಸನ ಬಳಿಯಲ್ಲಿ ಕೂಡಿಬಂದು, “ಅರಸನಾದ ದಾರ್ಯಾವೆಷನೇ, ನಿರಂತರವಾಗಿ ಬಾಳು.</verse>
				<verse number="7">ರಾಜ್ಯದ ಎಲ್ಲಾ ದೇಶಾಧಿಪತಿಗಳೂ, ರಾಜ್ಯಪಾಲರೂ, ನಾಯಕರೂ, ಉಪರಾಜರೂ, ಆಲೋಚನೆಗಾರರೂ ಒಟ್ಟುಗೂಡಿ ಆಲೋಚಿಸಿದ್ದೇನೆಂದರೆ ಅರಸನೇ, ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ, ಮನುಷ್ಯರಿಗಾಗಲಿ ಪ್ರಾರ್ಥನೆ ಮಾಡಿದ್ದಾದರೆ ಅಂಥವರು ಸಿಂಹಗಳ ಗವಿಗೆ ಹಾಕಲಾಗುವುದು ಎಂಬ ರಾಜಾಜ್ಞೆಯನ್ನು ವಿಧಿಸಿ, ಸ್ಥಿರ ಕಟ್ಟಳೆಯನ್ನು ಕೊಡತಕ್ಕದ್ದು.</verse>
				<verse number="8">ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ, ಇದು ಬದಲಾಗದ ಮೇದ್ಯರ ಮತ್ತು ಪಾರಸಿಯರ ನಿಯಮಗಳ ಪ್ರಕಾರ ಇದು ರದ್ದಾಗದಂತೆ ನಿರ್ಣಯವನ್ನು ರೂಪಿಸಿ, ಶಾಸನಕ್ಕೆ ರುಜುಹಾಕು,” ಎಂದು ವಿನಂತಿಸಿದರು.</verse>
				<verse number="9">ಆದಕಾರಣ ದಾರ್ಯಾವೆಷನು ಆ ಬರಹಕ್ಕೂ, ನಿರ್ಣಯಕ್ಕೂ ರುಜು ಹಾಕಿದನು.</verse>
				<verse number="10">ಶಾಸನಕ್ಕೆ ರುಜು ಹಾಕಿದ್ದಾಯಿತೆಂದು ದಾನಿಯೇಲನಿಗೆ ತಿಳಿದಾಗ, ಅವನು ತನ್ನ ಮನೆಗೆ ಹೋದನು. ಅವನ ಕೋಣೆಯಲ್ಲಿ ಕಿಟಕಿಗಳು ಯೆರೂಸಲೇಮಿಗೆ ಎದುರಾಗಿ ತೆರೆದಿರಲು, ಅವನು ಮೊದಲು ಮಾಡುತ್ತಿದ್ದ ಪ್ರಕಾರವೇ ದಿನಕ್ಕೆ ಮೂರು ಸಾರಿ ಮೊಣಕಾಲೂರಿ ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ಸ್ತೋತ್ರವನ್ನೂ ಸಲ್ಲಿಸಿದನು.</verse>
				<verse number="11">ಆಮೇಲೆ ಆ ಮನುಷ್ಯರೆಲ್ಲಾ ಕೂಡಿಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನೂ ಮಾಡುತ್ತಿರುವುದನ್ನು ಕಂಡರು.</verse>
				<verse number="12">ಅನಂತರ ಅವರು ಅರಸನ ಮುಂದೆ ಬಂದು ರಾಜಾಜ್ಞೆಯ ವಿಷಯವಾಗಿ: “ಅರಸನೇ ಯಾರಾದರೂ ಮೂವತ್ತು ದಿವಸಗಳವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ, ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡುವರೋ, ಅವರನ್ನು ಸಿಂಹದ ಗವಿಯಲ್ಲಿ ಹಾಕಲಾಗುವುದು ಎಂಬ ಶಾಸನಕ್ಕೆ ನೀನು ರುಜು ಹಾಕಲಿಲ್ಲವೇ?” ಎಂದರು. ಅದಕ್ಕೆ ಅರಸನು ಉತ್ತರವಾಗಿ, “ಮೇದ್ಯ, ಪಾರಸಿಯರ ಬದಲಾಗದಂಥ ಧರ್ಮವಿಧಿಗಳ ಪ್ರಕಾರ ಅದು ಸ್ಥಿರವಾದ ನಿಬಂಧನೆ” ಎಂದನು.</verse>
				<verse number="13">ಆಗ ಅವರು ಉತ್ತರವಾಗಿ ಅರಸನ ಮುಂದೆ, “ಯೆಹೂದದ ಸೆರೆಯ ಮಕ್ಕಳಲ್ಲಿ ಒಬ್ಬನಾದ ಆ ದಾನಿಯೇಲನು ಅರಸನಾದ ನಿನ್ನನ್ನಾದರೂ, ನೀನು ರುಜು ಹಾಕಿದ ನಿರ್ಣಯವನ್ನೂ ಲಕ್ಷಿಸದೆ, ದಿನಕ್ಕೆ ಮೂರು ಸಾರಿ ತನ್ನ ಪ್ರಾರ್ಥನೆಯನ್ನು ಮಾಡುತ್ತಾನೆ,” ಎಂದರು.</verse>
				<verse number="14">ಅರಸನು ಯಾವಾಗ ಈ ಮಾತುಗಳನ್ನು ಕೇಳಿದನೋ, ಆಗ ತನ್ನಲ್ಲಿಯೇ ಬಹಳವಾಗಿ ಬೇಸರಗೊಂಡು ದಾನಿಯೇಲನನ್ನು ಅದರಿಂದ ತಪ್ಪಿಸಬೇಕೆಂದು ತನ್ನ ಹೃದಯದಲ್ಲಿ ತಿಳಿದು, ಸೂರ್ಯಾಸ್ತಮಾನದವರೆಗೂ ಪ್ರಯತ್ನಪಟ್ಟನು.</verse>
				<verse number="15">ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿಬಂದು ಅರಸನಿಗೆ, “ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ, ಆಜ್ಞೆಯಾದರೂ ರದ್ದಾಗಬಾರದು ಎಂಬ ಮೇದ್ಯ ಮತ್ತು ಪಾರಸಿಯರ ನಿಯಮದಲ್ಲಿದೆ ಎಂದು ನಿನಗೆ ತಿಳಿದಿರಬೇಕು,” ಎಂದರು.</verse>
				<verse number="16">ಆಗ ರಾಜನು ಆಜ್ಞಾಪಿಸಲು, ಅವರು ದಾನಿಯೇಲನನ್ನು ತಂದು ಸಿಂಹದ ಗುಹೆಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ, “ನೀನು ಯಾವಾಗಲೂ ಸೇವಿಸುವ ನಿನ್ನ ದೇವರು ನಿನ್ನನ್ನು ಕಾಪಾಡಲಿ!” ಎಂದು ಹೇಳಿದನು.</verse>
				<verse number="17">ಗುಹೆಯ ಬಾಯಿಯನ್ನು ಬಂಡೆಯಿಂದ ಮುಚ್ಚಲಾಯಿತು. ಇದಲ್ಲದೆ ದಾನಿಯೇಲನ ಪರಿಸ್ಥಿತಿಯು ಬದಲಾಗದ ಹಾಗೆ ಅರಸನು ತನ್ನ ಮುದ್ರೆಯನ್ನೂ, ತನ್ನ ಪ್ರಧಾನರ ಮುದ್ರೆಯನ್ನೂ ಅದಕ್ಕೆ ಹಾಕಿದನು.</verse>
				<verse number="18">ಆಮೇಲೆ ಅರಸನು ತನ್ನ ಅರಮನೆಗೆ ಹಿಂದಿರುಗಿ, ಉಪವಾಸದಿಂದಲೇ ರಾತ್ರಿಯನ್ನು ಕಳೆದನು. ಗಾನ, ವಾದ್ಯಗಳನ್ನು ಅವನ ಮುಂದೆ ತರಲಿಲ್ಲ. ಅರಸನಿಗೆ ನಿದ್ರೆ ಬರಲಿಲ್ಲ.</verse>
				<verse number="19">ಮುಂಜಾನೆಗೆ ಮೊದಲೇ ಅರಸನು ಎದ್ದು, ತ್ವರೆಯಾಗಿ ಸಿಂಹಗಳ ಗವಿಯ ಬಳಿಗೆ ಹೋದನು.</verse>
				<verse number="20">ಅವನು ಗವಿಯ ಹತ್ತಿರ ಬಂದಾಗ, ದುಃಖದ ಧ್ವನಿಯಲ್ಲಿ ದಾನಿಯೇಲನನ್ನು ಕೂಗಿದನು. ಅರಸನು ಮಾತನಾಡಿ ದಾನಿಯೇಲನಿಗೆ, “ಜೀವಸ್ವರೂಪರಾದ ದೇವರ ಸೇವಕನಾದ ದಾನಿಯೇಲನೇ, ನೀನು ಯಾವಾಗಲೂ ಸೇವಿಸುವ ಆ ನಿನ್ನ ದೇವರು ನಿನ್ನನ್ನು ಸಿಂಹಗಳಿಂದ ಬಿಡಿಸಿ ಕಾಪಾಡಲು ಸಮರ್ಥರಾಗಿದ್ದಾರೆಯೇ?” ಎಂದು ಕೇಳಿದನು.</verse>
				<verse number="21">ಆಗ ದಾನಿಯೇಲನು ಅರಸನಿಗೆ, “ಅರಸನೇ, ನೀನು ನಿರಂತರವಾಗಿ ಬಾಳು.</verse>
				<verse number="22">ನನ್ನ ದೇವರು ತಮ್ಮ ದೂತನನ್ನು ಕಳುಹಿಸಿ, ನನಗೆ ಯಾವ ಹಾನಿಯೂ ಆಗದಂತೆ ಸಿಂಹಗಳ ಬಾಯಿಗಳನ್ನು ಮುಚ್ಚಿಹಾಕಿದ್ದಾರೆ. ಏಕೆಂದರೆ ಅವರ ಮುಂದೆ ನಾನು ಯಥಾರ್ಥನೆಂದು ಗೋಚರವಾಗಿದ್ದೇನೆ. ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ತಪ್ಪನ್ನು ಮಾಡಲಿಲ್ಲ,” ಎಂದು ಹೇಳಿದನು.</verse>
				<verse number="23">ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆಮಾಡಿದನು. ದಾನಿಯೇಲನನ್ನು ಗುಹೆಯೊಳಗಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಅವನು ದೃಢವಾದ ಭರವಸೆ ಇಟ್ಟಿದ್ದರಿಂದ ಯಾವ ಹಾನಿಯೂ ಆಗಿರಲಿಲ್ಲ.</verse>
				<verse number="24">ಆಗ ಅರಸನು ಆಜ್ಞಾಪಿಸಲಾಗಿ, ದಾನಿಯೇಲನ ಮೇಲೆ ತಪ್ಪು ಹೊರಿಸಿದ್ದ ಮನುಷ್ಯರನ್ನು ತಂದು ಅವರನ್ನೂ, ಅವರ ಹೆಂಡತಿ ಮಕ್ಕಳನ್ನೂ ಸಿಂಹಗಳ ಗುಹೆಯಲ್ಲಿ ಹಾಕಿದರು. ಅವರು ಗುಹೆಯ ತಳವನ್ನು ಮುಟ್ಟುವುದಕ್ಕೆ ಮೊದಲೇ ಸಿಂಹಗಳು ಅವರ ಮೇಲೆ ಹಾರಿ ಬಂದು, ಅವರ ಎಲುಬುಗಳನ್ನೆಲ್ಲಾ ತುಂಡುತುಂಡಾಗಿ ಮುರಿದುಹಾಕಿದವು.</verse>
				<verse number="25">ಆಗ ಅರಸನಾದ ದಾರ್ಯಾವೆಷನು ಭೂಲೋಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ, ಭಾಷೆಗಳವರೆಗೆ ಬರೆದದ್ದೇನೆಂದರೆ, “ನೀವು ಅಪಾರವಾಗಿ ಸಮೃದ್ಧಿಗೊಳ್ಳಿರಿ.</verse>
				<verse number="26">“ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯನು ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂಬ ನಿರ್ಣಯ ಹೊರಡಿಸಿದ್ದೇನೆ. “ಅವರೇ ಜೀವವುಳ್ಳ ದೇವರಾಗಿದ್ದು, ಎಂದೆಂದಿಗೂ ಸ್ಥಿರವಾಗಿರುವವರಾಗಿದ್ದಾರೆ. ಅವರ ರಾಜ್ಯವು ನಾಶವಾಗದೆ, ಅವರ ಆಳ್ವಿಕೆ ಶಾಶ್ವತವಾಗಿ ನಿಲ್ಲುವುದು.</verse>
				<verse number="27">ಅವರೇ ಉದ್ಧರಿಸುವವರೂ ರಕ್ಷಿಸುವವರೂ ಆಗಿದ್ದು, ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಅದ್ಭುತ ಮಹತ್ತುಗಳನ್ನು ನಡೆಸುತ್ತಾರೆ. ದಾನಿಯೇಲನನ್ನು ಸಿಂಹಗಳ ಸಾಮರ್ಥ್ಯದಿಂದ ಬಿಡಿಸಿದವರೂ ಅವರೇ!”</verse>
				<verse number="28">ಹೀಗೆ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲಿಯೂ, ಪಾರಸಿಯನಾದ ಕೋರೆಷನ ಆಳ್ವಿಕೆಯಲ್ಲಿಯೂ ಸಮೃದ್ಧವಾಗಿ ಬಾಳಿದನು.</verse>
			</chapter>
			<chapter number="7">
				<verse number="1">ಬಾಬಿಲೋನಿನ ಅರಸನಾದ ಬೇಲ್ಯಚ್ಚರನ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಕನಸನ್ನೂ, ದರ್ಶನಗಳನ್ನೂ ಕಂಡು, ತನ್ನ ಕನಸಿನ ತಾತ್ಪರ್ಯವನ್ನು ಬರೆದಿಟ್ಟನು.</verse>
				<verse number="2">ದಾನಿಯೇಲನು, “ನಾನು ರಾತ್ರಿ ಕಂಡ ಕನಸಿನಲ್ಲಿ ನಾಲ್ಕು ದಿಕ್ಕುಗಳಿಂದಲೂ ಗಾಳಿಯು ಮಹಾಸಾಗರವನ್ನು ಕಲಕುತ್ತಿದ್ದವು.</verse>
				<verse number="3">ಒಂದಕ್ಕೊಂದು ಬೇರೆ ಬೇರೆ ರೂಪದ ನಾಲ್ಕು ದೊಡ್ಡ ಮೃಗಗಳು ಸಮುದ್ರದೊಳಗಿಂದ ಮೇಲೆ ಬಂದವು.</verse>
				<verse number="4">“ಮೊದಲನೆಯದು ಸಿಂಹದ ಹಾಗಿತ್ತು, ಆದರೆ ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ನಾನು ಗಮನಿಸಲು, ಅದರ ರೆಕ್ಕೆಗಳನ್ನು ಕಿತ್ತುಹಾಕಲಾಗಿ, ಅದು ನೆಲದಿಂದ ಎತ್ತರಕ್ಕೆ ಮನುಷ್ಯನಂತೆ ಕಾಲೂರಿ ನಿಂತಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲಾಯಿತು.</verse>
				<verse number="5">“ಇದಲ್ಲದೆ, ಎರಡನೆಯ ಮೃಗವು ಕರಡಿಯ ಹಾಗಿರುವಂಥದ್ದನ್ನು ಕಂಡೆನು. ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ಇದರ ಬಾಯಿಯ ಹಲ್ಲುಗಳ ಮಧ್ಯದಲ್ಲಿ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿದ್ದವು. ಅದಕ್ಕೆ, ‘ಎದ್ದೇಳು, ಹೆಚ್ಚು ಮಾಂಸವನ್ನು ತಿನ್ನು,’ ಎಂದು ಹೇಳಿದರು.</verse>
				<verse number="6">“ಇದಾದ ಮೇಲೆ ನಾನು ನೋಡಲಾಗಿ, ಚಿರತೆಯ ಹಾಗಿರುವ ಇನ್ನೊಂದು ಮೃಗವಿತ್ತು. ಇದರ ಬೆನ್ನಿನ ಮೇಲೆ ಪಕ್ಷಿಯ ರೆಕ್ಕೆಗಳು ನಾಲ್ಕು ಇವೆ. ಈ ಮೃಗಕ್ಕೆ ನಾಲ್ಕು ತಲೆಗಳು ಸಹ ಇವೆ. ಇದಕ್ಕೆ ಆಳುವ ಅಧಿಕಾರವು ಕೊಡಲಾಗಿತ್ತು.</verse>
				<verse number="7">“ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ, ನಾಲ್ಕನೆಯ ಮೃಗವು ಭಯಂಕರವೂ, ಘೋರವೂ, ಬಹು ಬಲವುಳ್ಳದ್ದೂ ಆಗಿತ್ತು. ಅದಕ್ಕೆ ದೊಡ್ಡ ಕಬ್ಬಿಣದ ಹಲ್ಲುಗಳು ಇವೆ. ಅದು ತಿಂದು ತುಂಡುತುಂಡು ಮಾಡಿ, ಮಿಕ್ಕದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದೂ, ಹತ್ತು ಕೊಂಬುಗಳುಳ್ಳದ್ದೂ ಆಗಿತ್ತು.</verse>
				<verse number="8">“ಆ ಕೊಂಬುಗಳ ಬಗ್ಗೆ ನಾನು ಆಲೋಚಿಸುತ್ತಿರುವಾಗ ಇಗೋ, ಮತ್ತೊಂದು ಚಿಕ್ಕ ಕೊಂಬು ಅವುಗಳಲ್ಲಿ ಎದ್ದು ಕಾಣುತ್ತಿದೆ. ಇದರ ಮುಂದೆ ಮೊದಲಿನ ಕೊಂಬುಗಳಲ್ಲಿ ಮೂರನ್ನು ಬೇರುಸಹಿತ ಕೀಳಲಾಯಿತು. ಈ ಕೊಂಬಿನಲ್ಲಿ ಮನುಷ್ಯರ ಕಣ್ಣುಗಳ ಹಾಗೆ ಕಣ್ಣುಗಳೂ, ಬಡಾಯಿ ಕೊಚ್ಚುವ ಬಾಯಿಯೂ ಇದ್ದವು.</verse>
				<verse number="9">“ನಾನು ನೋಡುತ್ತಿದ್ದ ಹಾಗೆಯೇ, “ಸಿಂಹಾಸನಗಳನ್ನು ಜೋಡಿಸಿದರು. ಅದರ ಮೇಲೆ ಪುರಾತನ ಮನುಷ್ಯನು ಕುಳಿತುಕೊಂಡನು. ಆತನ ವಸ್ತ್ರವು ಹಿಮದಂತೆ ಬಿಳುಪಾಗಿಯೂ, ಆತನ ತಲೆಕೂದಲು ಶುದ್ಧ ಉಣ್ಣೆಯಂತೆಯೂ, ಆತನ ಸಿಂಹಾಸನವು ಅಗ್ನಿ ಜ್ವಾಲೆಯಂತೆಯೂ, ಆತನ ಚಕ್ರಗಳು ಉರಿಯುವ ಬೆಂಕಿಯಂತೆಯೂ ಇದ್ದವು.</verse>
				<verse number="10">ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟುಬಂದು, ಸಹಸ್ರ ಸಹಸ್ರವಾಗಿ ಆತನಿಗೆ ಸೇವೆ ಮಾಡಿದವು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದವು. ನ್ಯಾಯ ಸಭೆಯು ಕುಳಿತಿತ್ತು ಮತ್ತು ಪುಸ್ತಕಗಳು ತೆರೆದಿದ್ದವು.</verse>
				<verse number="11">“ನಾನು ನೋಡುತ್ತಿರಲು, ಆ ಕೊಂಬು ಬಡಾಯಿಕೊಚ್ಚಿಕೊಂಡದ್ದರಿಂದ ಮೃಗವನ್ನು ಕೊಂದು ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.</verse>
				<verse number="12">ಮಿಕ್ಕ ಮೃಗಗಳನ್ನು ಅವುಗಳ ಅಧಿಕಾರದಿಂದ ಹೊರಹಾಕಲಾಯಿತು. ಆದರೆ ಕೆಲವು ಕಾಲದ ಮೇಲೆ ತಕ್ಕ ಸಮಯ ಬರುವವರೆಗೂ ಅವುಗಳ ಜೀವವನ್ನು ಉಳಿಸಿದರು.</verse>
				<verse number="13">“ನಾನು ಕಂಡ ರಾತ್ರಿಯ ದರ್ಶನದಲ್ಲಿ ಮನುಷ್ಯಪುತ್ರನಂತಿರುವವನು ಆಕಾಶದ ಮೇಘಗಳ ಸಂಗಡ ಪುರಾತನ ಮನುಷ್ಯನ ಬಳಿಗೆ ಸಮೀಪಿಸಿದನು. ಅವನನ್ನು ಆತನ ಬಳಿಗೆ ತಂದರು.</verse>
				<verse number="14">ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು, ಮಹತ್ವವು, ರಾಜ್ಯವು ಇವುಗಳನ್ನು ಕೊಡಲಾಯಿತು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂಥ ರಾಜ್ಯವಾಗಿದೆ.</verse>
				<verse number="15">“ದಾನಿಯೇಲನೆಂಬ ನಾನು ನನ್ನ ಆತ್ಮದಲ್ಲಿ ನೊಂದುಕೊಂಡೆನು. ನನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳ ನಿಮಿತ್ತ ಕಳವಳಗೊಂಡೆನು.</verse>
				<verse number="16">ನಾನು ಹತ್ತಿರ ನಿಂತವರಲ್ಲಿ ಒಬ್ಬನ ಬಳಿಗೆ ಬಂದು ಇವೆಲ್ಲವುಗಳ ಸತ್ಯಾರ್ಥವನ್ನು ಕೇಳಿದೆನು. “ಆಗ ಅವನು ಅದನ್ನು ನನಗೆ ಹೇಳಿ ಇವುಗಳ ಅರ್ಥವನ್ನು ನನಗೆ ತಿಳಿಸಿದನು.</verse>
				<verse number="17">‘ಈ ದೊಡ್ಡ ಮೃಗಗಳು ಭೂಮಿಯಿಂದ ಹುಟ್ಟುವ ನಾಲ್ಕು ಅರಸರು.</verse>
				<verse number="18">ಆದರೆ ಆ ಮಹೋನ್ನತನ ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಂಡು, ಅದನ್ನು ಎಂದಿಗೂ ಎಂದೆಂದಿಗೂ ವಶಪಡಿಸಿಕೊಳ್ಳುವರು.’</verse>
				<verse number="19">“ಆಮೇಲೆ ನಾಲ್ಕನೆಯ ಮೃಗವು ಎಲ್ಲದರಲ್ಲಿ ವ್ಯತ್ಯಾಸವಾಗಿಯೂ, ಅತಿ ಭಯಂಕರವಾಗಿಯೂ, ಕಬ್ಬಿಣದ ಹಲ್ಲುಗಳುಳ್ಳದ್ದಾಗಿಯೂ, ಕಂಚಿನ ಉಗುರುಗಳುಳ್ಳದ್ದಾಗಿಯೂ ತುಂಡುತುಂಡು ಮಾಡಿ, ತಿಂದು ಮಿಕ್ಕಿದ್ದನ್ನು ಕಾಲಿನ ಕೆಳಗೆ ಹಾಕಿ ತುಳಿಯುವಂಥದ್ದೂ ಆಗಿದೆ.</verse>
				<verse number="20">ಅದರ ತಲೆಯಲ್ಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ, ನಾನು ನೋಡುತ್ತಿದ್ದ ಹಾಗೆಯೇ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ, ತನ್ನಲ್ಲಿಯೇ ಕಣ್ಣುಳ್ಳದ್ದಾಗಿ ಬಡಾಯಿ ಮಾತನಾಡಿದ ಬಾಯುಳ್ಳದ್ದಾಗಿ, ಮಿಕ್ಕ ಕೊಂಬುಗಳಿಗಿಂತ ಭಯಂಕರವಾಗಿ ಕಾಣಿಸುತ್ತಾ ಇದ್ದ ಆ ಕೊಂಬಿನ ವಿಷಯವಾಗಿ ಸತ್ಯಾರ್ಥವನ್ನು ತಿಳಿಯಬೇಕೆಂದಿದ್ದೇನೆ.</verse>
				<verse number="21">ನಾನು ನೋಡಲಾಗಿ ಆ ಕೊಂಬು ಪರಿಶುದ್ಧರ ಸಂಗಡ ಯುದ್ಧ ಮಾಡಿತು ಮತ್ತು ಅವರಿಗೆ ವಿರೋಧವಾಗಿ ಜಯಗಳಿಸಿತು.</verse>
				<verse number="22">ಪುರಾತನ ಮನುಷ್ಯನು ಬಂದು ಮಹೋನ್ನತನ ಪರಿಶುದ್ಧರಿಗೆ ನ್ಯಾಯತೀರ್ಪು ಕೊಡುವವರೆಗೂ, ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದವರೆಗೂ ಅವರ ಮೇಲೆ ಜಯವನ್ನು ಹೊಂದಿತು.</verse>
				<verse number="23">“ಆಗ ಅವನು ನನಗೆ: ‘ಆ ನಾಲ್ಕನೆಯ ಮೃಗವು ಭೂಮಿಯ ಮೇಲಿರುವ ನಾಲ್ಕನೆಯ ರಾಜ್ಯವಾಗುವುದು. ಅದು ಎಲ್ಲಾ ರಾಜ್ಯಗಳಿಗಿಂತ ವ್ಯತ್ಯಾಸವಾಗಿಯೂ, ಭೂಮಿಯನ್ನೆಲ್ಲಾ ತುಳಿದು ತುಂಡುತುಂಡು ಮಾಡುವಂಥಾದ್ದಾಗಿಯೂ ಇರುವುದು.</verse>
				<verse number="24">ಆ ಹತ್ತು ಕೊಂಬುಗಳು ಆ ರಾಜ್ಯದೊಳಗೆ ಹುಟ್ಟುವ ಹತ್ತು ಅರಸರು. ಅನಂತರ ಇನ್ನೊಬ್ಬ ಅರಸನು ಹುಟ್ಟುವನು. ಅವನು ಮೊದಲಿನವರಿಗಿಂತ ವಿಲಕ್ಷಣವಾಗಿ ಮೂರು ಅರಸರನ್ನು ಅದುಮಿ ಬಿಡುವನು.</verse>
				<verse number="25">ಅವನು ಮಹೋನ್ನತ ದೇವರಿಗೆ ವಿರೋಧವಾಗಿ ಕೊಚ್ಚಿಕೊಂಡು ಮಾತುಗಳನ್ನಾಡಿ, ಪರಿಶುದ್ಧರನ್ನು ಬಾಧಿಸಿ, ಕಾಲ ನಿಯಮಗಳನ್ನು ಬದಲಾಯಿಸುವುದಕ್ಕೆ ಪ್ರಯತ್ನಿಸುವನು. ಪರಿಶುದ್ಧರು ಒಂದುಕಾಲ, ಎರಡುಕಾಲ, ಅರ್ಧಕಾಲದ ತನಕ ಅವರು ಅವನ ಕೈವಶವಾಗಿರುವರು.</verse>
				<verse number="26">“ ‘ಆದರೆ ನ್ಯಾಯ ಸಭೆಯು ಕುಳಿತು ಅವನ ಅಧಿಕಾರವನ್ನು ತೆಗೆದುಹಾಕಿ, ಕೊನೆಯವರೆಗೂ ಅದನ್ನು ಸಂಹರಿಸಿ ನಾಶಪಡಿಸುವುದು.</verse>
				<verse number="27">ರಾಜ್ಯವೂ, ದೊರೆತನವೂ, ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತೂ ಮಹೋನ್ನತನ ಪರಿಶುದ್ಧವಾದ ಜನರಿಗೆ ದೊರಕುವುದು. ಆತನ ರಾಜ್ಯವು ನಿತ್ಯವಾದ ರಾಜ್ಯ. ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವುವು ಮತ್ತು ವಿಧೇಯವಾಗಿರುವುವು.’</verse>
				<verse number="28">“ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು. ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿದವು. ನನ್ನ ಮುಖವು ಕಳೆಗುಂದಿತು. ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.”</verse>
			</chapter>
			<chapter number="8">
				<verse number="1">ಮೊದಲು ನನಗೆ ಕಾಣಿಸಿದ ದರ್ಶನವಲ್ಲದೆ ಅರಸನಾದ ಬೇಲ್ಯಚ್ಚರನ ಆಳ್ವಿಕೆಯ ಮೂರನೆಯ ವರ್ಷದಲ್ಲಿಯೂ, ಮೊದಲಿನ ದರ್ಶನದಂಥ ಇನ್ನೊಂದು ದರ್ಶನವೂ ದಾನಿಯೇಲನಾದ ನನಗೆ ಕಾಣಿಸಿತು.</verse>
				<verse number="2">ಈ ದರ್ಶನದಲ್ಲಿ ನಾನು ನೋಡಿದ್ದೇನೆಂದರೆ: ನಾನು ಏಲಾಮ್ ಸೀಮೆಯಲ್ಲಿರುವ ಶೂಷನಿನ ಅರಮನೆಯಲ್ಲಿದ್ದೆನು. ಆ ದರ್ಶನದಲ್ಲಿ ನಾನು ಊಲಾ ನದಿಯ ದಡದ ಬಳಿಯಲ್ಲಿ ನಿಂತಿರುವ ಹಾಗೆ ತೋರಿತು.</verse>
				<verse number="3">ಆಗ ನಾನು ಕಣ್ಣೆತ್ತಿ ನೋಡಿದಾಗ, ಆ ನದಿಯ ಮುಂದೆ ಎರಡು ಕೊಂಬುಗಳುಳ್ಳ ಒಂದು ಟಗರು ನಿಂತಿತ್ತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ, ಇನ್ನೊಂದಕ್ಕಿಂತ ಒಂದು ಉದ್ದವಾಗಿದ್ದವು. ಆ ದೊಡ್ಡ ಕೊಂಬು ಚಿಕ್ಕ ಕೊಂಬು ಮೊಳೆತ ಮೇಲೆ ಮೊಳೆತದ್ದು.</verse>
				<verse number="4">ಆ ಟಗರು ಪಶ್ಚಿಮಕ್ಕೂ, ಉತ್ತರಕ್ಕೂ, ದಕ್ಷಿಣಕ್ಕೂ ಕಾದಾಡುತ್ತಿರುವುದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವುದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವುದಕ್ಕೂ ಸಾಧ್ಯವಾಗುವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ, ತನ್ನನ್ನು ಹೆಚ್ಚಿಸಿಕೊಂಡಿತು.</verse>
				<verse number="5">ನಾನು ಇದರ ಬಗ್ಗೆ ಆಲೋಚಿಸಲಾಗಿ ಕೂಡಲೆ, ಪಶ್ಚಿಮದಿಂದ ಒಂದು ಹೋತವು ನೆಲವನ್ನು ಸೋಕದೆ ಭೂಮಂಡಲವನ್ನೆಲ್ಲಾ ದಾಟಿಕೊಂಡು ಬಂದಿತು. ಆ ಹೋತಕ್ಕೆ ಕಣ್ಣುಗಳ ಮಧ್ಯೆ ವಿಶೇಷವಾದ ಕೊಂಬು ಇತ್ತು.</verse>
				<verse number="6">ನಾನು ನದಿಯ ಹತ್ತಿರ ಕಂಡ ಆ ಎರಡು ಕೊಂಬಿನ ಟಗರಿನ ಬಳಿಗೆ ಬಂದು ಪರಾಕ್ರಮದಿಂದ ರೋಷಗೊಂಡು ಅದರ ಮೇಲೆ ಬೀಳಬೇಕೆಂದು ಓಡಿತು.</verse>
				<verse number="7">ಅದು ಟಗರಿನ ಹತ್ತಿರ ಬರುವುದನ್ನು ನಾನು ನೋಡಿದೆನು. ಅದರ ಮೇಲಿನ ಕ್ರೋಧದಿಂದ ಅದನ್ನು ಹಾದು, ಅದರ ಎರಡು ಕೊಂಬುಗಳನ್ನು ಮುರಿದು ಬಿಟ್ಟಿತು. ಅದರ ಮುಂದೆ ನಿಲ್ಲುವುದಕ್ಕೆ ಟಗರಿಗೆ ಏನೂ ಶಕ್ತಿಯಿರಲಿಲ್ಲ. ಆದರೆ ಹೋತವು ಟಗರನ್ನು ನೆಲಕ್ಕೆ ಉರುಳಿಸಿ ತುಳಿಯಿತು. ಟಗರನ್ನು ಹೋತದ ಹಿಡಿತದಿಂದ ಬಿಡಿಸುವವರು ಯಾರೂ ಇರಲಿಲ್ಲ.</verse>
				<verse number="8">ಆದ್ದರಿಂದ ಆ ಹೋತವು ಬಹಳವಾಗಿ ಬಲಗೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದುಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು, ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು.</verse>
				<verse number="9">ಅವುಗಳ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ, ಪೂರ್ವದ ಕಡೆಗೂ, ರಮ್ಯ ದೇಶದ ಕಡೆಗೂ ಪ್ರಬಲವಾಯಿತು.</verse>
				<verse number="10">ಅದು ಆಕಾಶದ ಸೈನ್ಯದ ಎತ್ತರಕ್ಕೂ ಬೆಳೆದು, ಆ ಸೈನ್ಯದಲ್ಲಿಯೂ, ನಕ್ಷತ್ರಗಳಲ್ಲಿಯೂ ಕೆಲವನ್ನು ನೆಲಕ್ಕೆ ತಳ್ಳಿ, ಅವುಗಳನ್ನು ತುಳಿದು ಹಾಕಿತು.</verse>
				<verse number="11">ಅದು ಯೆಹೋವ ದೇವರ ಸೈನ್ಯದ ಅಧಿಪತಿಗೆ ವಿರೋಧವಾಗಿ ಬಲಗೊಂಡು, ನಿತ್ಯ ಯಜ್ಞವನ್ನು ಯೆಹೋವ ದೇವರಿಗೆ ಸಲ್ಲದಂತೆ ಮಾಡಿ, ಅವನ ಪವಿತ್ರ ಸ್ಥಾನವನ್ನು ಕೆಡವಿ ಹಾಕಲಾಯಿತು.</verse>
				<verse number="12">ಪ್ರತಿದಿನ ಯಜ್ಞದ ಸಂಗಡ ಯೆಹೋವ ದೇವರ ಸೈನ್ಯವೂ ಸಹ ಅಪರಾಧದ ನಿಮಿತ್ತವಾಗಿ ಅದಕ್ಕೆ ಕೊಡಲಾಯಿತು. ಅದು ಸತ್ಯವನ್ನು ನೆಲಕ್ಕೆ ಕೆಡವಿ, ಇಷ್ಟಾರ್ಥವನ್ನು ಪೂರೈಸಿಕೊಂಡು ಅನುಕೂಲ ಪಡೆಯಿತು, ವೃದ್ಧಿಗೆ ಬಂದಿತು.</verse>
				<verse number="13">ಆಮೇಲೆ ಒಬ್ಬ ಪರಿಶುದ್ಧನು ಮಾತನಾಡುವುದನ್ನು ಕೇಳಿದೆನು. ಮಾತನಾಡಿದ ಆತನಿಗೆ ಮತ್ತೊಬ್ಬ ಪರಿಶುದ್ಧನು, “ನಿತ್ಯ ಯಜ್ಞವನ್ನು ನಿಲ್ಲಿಸುವುದೂ, ಹಾಳುಮಾಡುವ ಅಪರಾಧವನ್ನು ತಡೆಯುವುದೂ, ಪರಿಶುದ್ಧ ಸ್ಥಳವನ್ನೂ, ಯೆಹೋವ ದೇವರ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವ ಈ ದರ್ಶನ ನೆರವೇರಲು ಎಷ್ಟು ಕಾಲ ಬೇಕಾಗುವುದು?” ಎಂದು ಕೇಳಿದನು.</verse>
				<verse number="14">ಅವನು ನನಗೆ, “ಎರಡು ಸಾವಿರದ ಮುನ್ನೂರು ಸಾಯಂಕಾಲ ಹಾಗೂ ಪ್ರಾತಃಕಾಲದವರೆಗೂ ನಡೆಯುವುವು. ಅನಂತರ ಪರಿಶುದ್ಧ ಸ್ಥಳವು ಪುನಃ ನ್ಯಾಯಸ್ಥಾಪನೆಯಾಗುವುದು,” ಎಂದು ಹೇಳಿದನು.</verse>
				<verse number="15">ದಾನಿಯೇಲನೆಂಬ ನಾನು ಆ ದರ್ಶನವನ್ನು ನೋಡಿ, ಅದರ ಅರ್ಥವನ್ನು ಗ್ರಹಿಸಲು ಪ್ರಯತ್ನಿಸುತ್ತಿರುವಾಗ, ಮನುಷ್ಯನ ರೂಪದಂತಿರುವ ಒಬ್ಬನು ನನ್ನ ಮುಂದೆ ನಿಂತಿದ್ದನು.</verse>
				<verse number="16">ನಾನು ಊಲಾ ನದಿಯ ಮಧ್ಯದಲ್ಲಿದ್ದಾಗ, “ಗಬ್ರಿಯೇಲನೇ, ಈ ಮನುಷ್ಯನು ದರ್ಶನವನ್ನು ಅರ್ಥಮಾಡಿಕೊಳ್ಳುವಂತೆ ಮಾಡು,” ಎಂದು ಹೇಳುವ ಮನುಷ್ಯನ ಧ್ವನಿಯನ್ನು ಕೇಳಿದೆನು.</verse>
				<verse number="17">ಅದರಂತೆ ಅವನು ನನ್ನ ಬಳಿಗೆ ಬಂದನು. ಅವನು ಬಂದಾಗ ನಾನು ಭಯಪಟ್ಟು ಮುಖ ಕೆಳಗಾಗಿ ಬಿದ್ದೆನು. ಆದರೆ ಅವನು ನನಗೆ, “ಮನುಷ್ಯಪುತ್ರನೇ, ಅಂತ್ಯಕಾಲದಲ್ಲಿ ನೆರವೇರುವ ದರ್ಶನವು ಎಂಬುದು ನಿನಗೆ ಮನದಟ್ಟಾಗಿರಲಿ,” ಎಂದನು.</verse>
				<verse number="18">ಈಗ ಅವನು ನನ್ನ ಸಂಗಡ ಮಾತನಾಡುತ್ತಿರುವಾಗ, ನಾನು ಮುಖ ಕೆಳಗಾಗಿ ನೆಲದ ಮೇಲೆ ಗಾಢನಿದ್ರೆಯಲ್ಲಿ ಬಿದ್ದಿದ್ದೆನು. ಆದರೆ ಅವನು ನನ್ನನ್ನು ಮುಟ್ಟಿ, ಎದ್ದು ನಿಲ್ಲುವಂತೆ ಮಾಡಿದನು.</verse>
				<verse number="19">ಅವನು, “ದೇವರು ತನ್ನ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುತ್ತೇನೆ ಕೇಳು, ಆ ದರ್ಶನವು ನಿಯಮಿತ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.</verse>
				<verse number="20">ನೀನು ಕಂಡ ಆ ಎರಡು ಕೊಂಬುಗಳುಳ್ಳ ಟಗರು, ಮೇದ್ಯ ಮತ್ತು ಪಾರಸಿಯ ರಾಜರು.</verse>
				<verse number="21">ಆ ಒರಟು ಹೋತವು ಗ್ರೀಕಿನ ಅರಸನು ಮತ್ತು ಕಣ್ಣುಗಳ ಮಧ್ಯೆ ಇದ್ದ ಆ ದೊಡ್ಡ ಕೊಂಬು ಮೊದಲನೆಯ ಅರಸನು.</verse>
				<verse number="22">ಆ ಕೊಂಬು ಮುರಿದುಹೋದ ಮೇಲೆ, ಅದಕ್ಕೆ ಬದಲಾಗಿ ನಾಲ್ಕು ಕೊಂಬುಗಳು ಎದ್ದಂತೆಯೇ, ಆ ಜನಾಂಗದಿಂದ ನಾಲ್ಕು ರಾಜ್ಯಗಳು ಉದಯಿಸುವುವು. ಆದರೆ ಮೊದಲನೆಯ ಅರಸನಿಗೆ ಇದ್ದಷ್ಟು ಅಧಿಕಾರ ಅವರಿಗೆ ಇರುವುದಿಲ್ಲ.</verse>
				<verse number="23">“ಅವರ ರಾಜ್ಯದ ಕಡೆಯ ಕಾಲದಲ್ಲಿ ಯಾವಾಗ ಅಪರಾಧಿಗಳು ತುಂಬಿ ಬರುವರೋ, ಆಗ ಕ್ರೂರ ಮುಖವುಳ್ಳವನೂ, ತಂತ್ರವುಳ್ಳವನೂ ಆದ ಒಬ್ಬ ಅರಸನು ಏಳುವನು.</verse>
				<verse number="24">ಅವನ ಶಕ್ತಿಯು ಬಲವಾಗಿರುವುದು. ಆದರೆ ಅದು ಸ್ವಂತ ಶಕ್ತಿಯಲ್ಲ. ಅವನು ಆಶ್ಚರ್ಯದ ರೀತಿಯಲ್ಲಿ ನಾಶಮಾಡಿ ಅಭಿವೃದ್ಧಿಯಾಗುವನು. ಅವನು ತನ್ನ ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲವಾದ, ಪರಿಶುದ್ಧ ಜನರನ್ನು ನಾಶಮಾಡುವನು.</verse>
				<verse number="25">ಅವನು ತನ್ನ ಶಕ್ತಿಯಿಂದಲೇ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಅವನು ಹೃದಯದಲ್ಲಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ಸುರಕ್ಷಿತರಾಗಿದ್ದೇವೆಂದು ಹೇಳುವಾಗಲೇ ಅನೇಕರನ್ನು ನಾಶಮಾಡುವನು. ಅಲ್ಲದೆ ಅವನು ರಾಜಕುಮಾರರ ರಾಜಕುಮಾರನಿಗೆ ವಿರುದ್ಧವಾಗಿ ನಿಲ್ಲುವನು. ಆದರೂ ಮಾನವ ಶಕ್ತಿಯ ಬಳಕೆ ಇಲ್ಲದೆಯೂ ನಾಶವಾಗುವನು.</verse>
				<verse number="26">“ನಿಮಗೆ ನೀಡಲಾದ ಸಂಜೆ ಮತ್ತು ಮುಂಜಾನೆಗಳ ದರ್ಶನವು ಸತ್ಯವಾದದ್ದು. ಆದರೆ ಆ ದರ್ಶನವು ಗುಟ್ಟಾಗಿರಲಿ. ಏಕೆಂದರೆ ಅದು ಬಹು ದೂರದ ಭವಿಷ್ಯಕ್ಕೆ ಸಂಬಂಧಿಸಿದ್ದು.”</verse>
				<verse number="27">ದಾನಿಯೇಲನಾದ ನಾನು ಬಳಲಿ ಕೆಲವು ದಿನಗಳವರೆಗೂ ಅಸ್ವಸ್ಥನಾದೆನು. ಅನಂತರ ನಾನು ಎದ್ದು, ಅರಸನ ಕೆಲಸ ಕಾರ್ಯಗಳನ್ನು ಮಾಡಿದೆನು. ನಾನು ಆ ದರ್ಶನದ ಬಗ್ಗೆ ಬೆಚ್ಚಿಬೆರಗಾದೆನು. ಅದರ ಅರ್ಥವನ್ನೇ ಗ್ರಹಿಸಿಕೊಳ್ಳಲಾಗಲಿಲ್ಲ.</verse>
			</chapter>
			<chapter number="9">
				<verse number="1">ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಆದ ದಾರ್ಯಾವೆಷನ ಆಳ್ವಿಕೆಯ ಪ್ರಥಮ ವರ್ಷದಲ್ಲಿ ಬಾಬಿಲೋನ್ ರಾಜ್ಯದ ಮೇಲೆ ಅಧಿಕಾರಿಯಾಗಿದ್ದಾಗ,</verse>
				<verse number="2">ದಾನಿಯೇಲನಾದ ನಾನು ಪವಿತ್ರ ಗ್ರಂಥಗಳನ್ನು ಪರೀಕ್ಷಿಸಿ, ಯೆಹೋವ ದೇವರ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ, ಯೆರೂಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣ ಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆನು.</verse>
				<verse number="3">ಆದ್ದರಿಂದ ನಾನು ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದುಕೊಂಡು, ಪ್ರಾರ್ಥನೆಗಳಿಂದ ಮತ್ತು ವಿಜ್ಞಾಪನೆಗಳಿಂದ ಕರ್ತರಾದ ದೇವರ ಕಡೆಗೆ ನನ್ನ ಮುಖವನ್ನು ತಿರುಗಿಸಿದೆನು.</verse>
				<verse number="4">ನಾನು ನನ್ನ ದೇವರಾದ ಯೆಹೋವ ದೇವರಿಗೆ ಪ್ರಾರ್ಥಿಸಿ, ಅರಿಕೆಮಾಡಿದೆನು: “ಕರ್ತನೇ, ಮಹೋನ್ನತ ಮತ್ತು ಅದ್ಭುತ ದೇವರೇ, ನಿಮ್ಮನ್ನು ಪ್ರೀತಿಮಾಡಿ, ನಿಮ್ಮ ಆಜ್ಞೆಗಳನ್ನು ಕೈಗೊಂಡು ನಡೆಯುವವರಿಗೆ ಒಡಂಬಡಿಕೆಯ ಪ್ರೀತಿಯನ್ನೂ ಇಟ್ಟು ನೆರವೇರಿಸುವವರೇ,</verse>
				<verse number="5">ನಾವು ಪಾಪಮಾಡಿದ್ದೇವೆ ಮತ್ತು ಅಕ್ರಮಗಳನ್ನು ಮಾಡಿದ್ದೇವೆ. ಕೆಟ್ಟವರಾಗಿ ನಡೆದಿದ್ದೇವೆ ಮತ್ತು ತಿರುಗಿಬಿದ್ದಿದ್ದೇವೆ. ನಿಮ್ಮ ಕಟ್ಟಳೆಗಳನ್ನು ಮತ್ತು ನ್ಯಾಯಗಳನ್ನು ತೊರೆದುಬಿಟ್ಟಿದ್ದೇವೆ.</verse>
				<verse number="6">ನಿಮ್ಮ ಹೆಸರಿನಲ್ಲಿ ನಮ್ಮ ಅರಸರಿಗೂ, ನಮ್ಮ ರಾಜಕುಮಾರರಿಗೂ, ನಮ್ಮ ಪೂರ್ವಜರಿಗೂ ದೇಶದ ಎಲ್ಲಾ ಜನರಿಗೂ ಮಾತನಾಡಿದ ನಿಮ್ಮ ಸೇವಕರಾದ ಪ್ರವಾದಿಗಳಿಗೆ ಕಿವಿಗೊಡಲಿಲ್ಲ.</verse>
				<verse number="7">“ಕರ್ತದೇವರೇ, ನೀವು ನೀತಿವಂತರು, ಆದರೆ ನಾವು ಈ ದಿನ ಬಹಳ ಲಜ್ಜೆಗೆಟ್ಟವರು. ಯೆಹೂದ್ಯರು ಹಾಗು ಯೆರೂಸಲೇಮಿನ ನಿವಾಸಿಗಳು ಈಗಾಗಲೇ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ಚದರಿಹೋಗಿದ್ದಾರೆ. ದೂರದ ದೇಶಗಳಿಗೂ, ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಆ ಎಲ್ಲಾ ಇಸ್ರಾಯೇಲರು ನಾಚಿಕೆಗೆ ಈಡಾಗಿದ್ದಾರೆ.</verse>
				<verse number="8">ಯೆಹೋವ ದೇವರೇ, ನಮ್ಮ ಅರಸರಿಗೂ ನಮ್ಮ ರಾಜಕುಮಾರರಿಗೂ, ನಮ್ಮ ಪೂರ್ವಜರಿಗೂ, ನಮಗೂ ನಾಚಿಕೆಯಾಗಿದೆ. ಏಕೆಂದರೆ ನಿಮಗೆ ವಿರುದ್ಧವಾಗಿ ನಾವು ಪಾಪಮಾಡಿದ್ದೇವೆ.</verse>
				<verse number="9">ನಾವು ಆತನಿಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದರೂ, ನಮ್ಮ ಕರ್ತದೇವರು ಕರುಣೆಯುಳ್ಳವರೂ ಕ್ಷಮಿಸುವವರೂ ಆಗಿದ್ದಾರೆ.</verse>
				<verse number="10">ನಾವು ನಮ್ಮ ದೇವರಾದ ಯೆಹೋವ ದೇವರಿಗೆ ವಿಧೇಯರಾಗಲಿಲ್ಲ, ಅವರು ತಮ್ಮ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ನೀಡಿದ ನಿಯಮಗಳನ್ನು ಪಾಲಿಸಲಿಲ್ಲ.</verse>
				<verse number="11">ಎಲ್ಲಾ ಇಸ್ರಾಯೇಲರು ನಿಮ್ಮ ನಿಯಮವನ್ನು ಮೀರಿ ನಿಮಗೆ ವಿಧೇಯರಾಗದೇ ತೊಲಗಿ ಹೋದರು. “ಆದ್ದರಿಂದ ಶಾಪವೂ, ದೇವರ ಸೇವಕನಾದ ಮೋಶೆಯು ನಿಯಮದಲ್ಲಿ ಬರೆದ ನ್ಯಾಯ ತೀರ್ಪುಗಳೂ ಅವರಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ, ನಮ್ಮ ಮೇಲೆ ಸುರಿಯಲಾಗಿದೆ.</verse>
				<verse number="12">ಅವರು ನಮಗೂ, ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾವು ಹೇಳಿದ ಮಾತುಗಳನ್ನು ನೆರವೇರಿಸಿ, ನಮ್ಮ ಮೇಲೆ ದೊಡ್ಡ ವಿನಾಶ ಬರುವ ಹಾಗೆ ಮಾಡಿದ್ದಾರೆ. ಯೆರೂಸಲೇಮಿನಲ್ಲಿ ನಡೆದ ಹಾಗೆ ಇಡೀ ಆಕಾಶದ ಕೆಳಗೆ ಎಲ್ಲೂ ನಡೆಯಲಿಲ್ಲ.</verse>
				<verse number="13">ಮೋಶೆಯ ನಿಯಮದಲ್ಲಿ ಬರೆದಿರುವ ಪ್ರಕಾರ, ಈ ಎಲ್ಲಾ ವಿನಾಶ ನಮ್ಮ ಮೇಲೆ ಬಂದಿದೆ. ಆದರೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿಮ್ಮ ಸತ್ಯವನ್ನು ತಿಳಿದುಕೊಳ್ಳುವಂತೆ, ನಮ್ಮ ದೇವರಾದ ಯೆಹೋವ ದೇವರ ದಯೆಯನ್ನು ಬೇಡಿಕೊಳ್ಳಲಿಲ್ಲ.</verse>
				<verse number="14">ನಮ್ಮ ದೇವರಾದ ಯೆಹೋವ ದೇವರು ತಾವು ಮಾಡುವ ಎಲ್ಲದರಲ್ಲಿಯೂ ನೀತಿವಂತರಾಗಿದ್ದುದರಿಂದ, ವಿನಾಶವನ್ನು ನಮ್ಮ ಮೇಲೆ ಬರಮಾಡಲು ಯೆಹೋವ ದೇವರು ಹಿಂಜರಿಯಲಿಲ್ಲ. ಆದರೂ ನಾವು ಅವರಿಗೆ ವಿಧೇಯರಾಗಲೇ ಇಲ್ಲ.</verse>
				<verse number="15">“ಈಗ ನಮ್ಮ ಕರ್ತದೇವರೇ, ನಿಮ್ಮ ಭುಜಬಲವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟ್ ದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರು ಪಡೆದುಕೊಂಡವರೇ, ನಾವು ಪಾಪಮಾಡಿದ್ದೇವೆ, ನಾವು ಕೆಟ್ಟವರಾಗಿ ನಡೆದುಕೊಂಡಿದ್ದೇವೆ.</verse>
				<verse number="16">ಕರ್ತದೇವರೇ, ನಿಮ್ಮ ಎಲ್ಲಾ ನೀತಿಗಳ ಪ್ರಕಾರ ನಿಮ್ಮ ಕೋಪವನ್ನು, ನಿಮ್ಮ ಉಗ್ರತ್ವವನ್ನು ನಿಮ್ಮ ಪಟ್ಟಣವಾದ ಯೆರೂಸಲೇಮಿನಿಂದಲೂ ನಿಮ್ಮ ಪರಿಶುದ್ಧ ಪರ್ವತದಿಂದಲೂ ತಿರುಗಿಸಿಬಿಡಿರಿ. ನಮ್ಮ ಪಾಪಗಳ ನಿಮಿತ್ತದಿಂದಲೂ, ನಮ್ಮ ಪಿತೃಗಳ ಅಕ್ರಮಗಳ ನಿಮಿತ್ತದಿಂದಲೂ ಯೆರೂಸಲೇಮ್ ಮತ್ತು ನಿಮ್ಮ ಜನರು ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.</verse>
				<verse number="17">“ಈಗ, ನಮ್ಮ ದೇವರೇ, ಈ ನಿಮ್ಮ ಸೇವಕನ ಪ್ರಾರ್ಥನೆ ಮತ್ತು ವಿಜ್ಞಾಪನೆಗಳನ್ನು ಕೇಳಿರಿ. ಕರ್ತದೇವರೇ, ಹಾಳಾಗಿರುವ ನಿಮ್ಮ ಪರಿಶುದ್ಧ ಸ್ಥಳವನ್ನು ನಿಮ್ಮ ನಿಮಿತ್ತವಾಗಿ ಅನುಗ್ರಹದಿಂದ ನೋಡಿರಿ.</verse>
				<verse number="18">ನನ್ನ ದೇವರೇ, ನೀವು ಕಿವಿಗೊಟ್ಟು ಕೇಳಿರಿ. ನಿಮ್ಮ ಕಣ್ಣುಗಳನ್ನು ತೆರೆದು ನಮ್ಮ ನಾಶವನ್ನೂ, ನಿಮ್ಮ ಹೆಸರಿನಿಂದ ಕರೆಯಲಾಗುವ ಈ ಹಾಳಾಗಿರುವ ಪಟ್ಟಣವನ್ನೂ ನೋಡಿರಿ. ಏಕೆಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿಮ್ಮ ಮಹಾ ಕರುಣೆಗಾಗಿಯೇ ನಮ್ಮ ವಿಜ್ಞಾಪನೆಗಳನ್ನು ನಿಮ್ಮ ಮುಂದೆ ಅರ್ಪಿಸುತ್ತೇವೆ.</verse>
				<verse number="19">ಕರ್ತದೇವರೇ ಕೇಳಿರಿ! ಕರ್ತದೇವರೇ ಕ್ಷಮಿಸಿರಿ! ಕರ್ತದೇವರೇ ಲಾಲಿಸಿರಿ ಮತ್ತು ಕಾರ್ಯವನ್ನು ಸಾಧಿಸಿರಿ! ನನ್ನ ದೇವರೇ, ನಿಮ್ಮ ನಿಮಿತ್ತವಾಗಿ ತಡಮಾಡಬೇಡಿರಿ. ಏಕೆಂದರೆ ನಿಮ್ಮ ಪಟ್ಟಣವೂ ನಿಮ್ಮ ಜನರೂ ನಿಮ್ಮ ಹೆಸರನ್ನು ಧರಿಸಿದ್ದಾರೆ.”</verse>
				<verse number="20">ನಾನು ಮಾತಾಡುತ್ತಾ, ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ, ನನ್ನ ಜನರಾದ ಇಸ್ರಾಯೇಲರ ಪಾಪವನ್ನೂ ಅರಿಕೆಮಾಡುತ್ತಾ, ನನ್ನ ದೇವರಾದ ಯೆಹೋವ ದೇವರ ಮುಂದೆ ಅವರ ಪರಿಶುದ್ಧ ಪರ್ವತಕ್ಕೋಸ್ಕರವಾಗಿ, ವಿಜ್ಞಾಪಿಸುತ್ತಿರಲಾಗಿ,</verse>
				<verse number="21">ನಾನು ಇನ್ನೂ ಪ್ರಾರ್ಥಿಸುತ್ತಿದ್ದಾಗ, ನಾನು ಮೊದಲ ದರ್ಶನದಲ್ಲಿ ಕಂಡಿದ್ದ ಸುಮಾರು ಸಾಯಂಕಾಲದ ನೈವೇದ್ಯವನ್ನು ಅರ್ಪಿಸುವ ಹೊತ್ತಿನಲ್ಲಿ, ನನ್ನ ಬಳಿ ಗಬ್ರಿಯೇಲನು ಬೇಗನೆ ಹಾರಿ ಬಂದು,</verse>
				<verse number="22">ನನಗೆ, “ದಾನಿಯೇಲನೇ, ನಿನಗೆ ವಿವೇಕವನ್ನೂ, ಬುದ್ಧಿಯನ್ನೂ ಕೊಡುವುದಕ್ಕೆ ಈಗ ನಾನು ಬಂದಿದ್ದೇನೆ.</verse>
				<verse number="23">ನೀನು ವಿಜ್ಞಾಪನೆ ಮಾಡಿದ ಕೂಡಲೇ ಉತ್ತರ ಸಿಕ್ಕಿತು. ಅದನ್ನು ನಿನಗೆ ತಿಳಿಸುವುದಕ್ಕೆ ನಾನು ಬಂದಿದ್ದೇನೆ. ಏಕೆಂದರೆ ನೀನು ಅತಿ ಪ್ರಿಯನಾಗಿರುವೆ. ಆದ್ದರಿಂದ ವಿಷಯವನ್ನು ಗ್ರಹಿಸಿಕೊಂಡು ದರ್ಶನವನ್ನು ತಿಳಿದುಕೋ.</verse>
				<verse number="24">“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.</verse>
				<verse number="25">“ಆದ್ದರಿಂದ ನೀನು ಅರಿತು ತಿಳಿಯಬೇಕಾದದ್ದು ಏನೆಂದರೆ, ಯೆರೂಸಲೇಮನ್ನು ತಿರುಗಿ ಕಟ್ಟಲು ಆಜ್ಞೆ ಹೊರಡುವ ದಿನದಿಂದ, ಆಳುವ ಒಬ್ಬ ಅಭಿಷಿಕ್ತರು ಬರುವುದರೊಳಗೆ ಏಳು ವಾರಗಳು ಕಳೆಯಬೇಕು! ಅದು ಪುನಃ ಕಟ್ಟಿದ ಮೇಲೆ, ಅರವತ್ತೆರಡು ವಾರಗಳು ಇರುವುದು. ಕಷ್ಟಕಾಲದಲ್ಲಿ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಅದು ಕಟ್ಟಲಾಗುವುದು.</verse>
				<verse number="26">ಅರವತ್ತೆರಡು ವಾರಗಳಾದ ಮೇಲೆ ಆ ಅಭಿಷಿಕ್ತರನ್ನು ಕೊಂದುಹಾಕುವರು. ಅವರಿಗೆ ಏನೂ ಇರುವುದಿಲ್ಲ. ಆದರೆ ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ, ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವುದು. ಅಂತ್ಯದವರೆಗೂ ಯುದ್ಧವಾಗಿ ನಾಶ ಸಂಭವಿಸುವುದು.</verse>
				<verse number="27">ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಅರ್ಧದಲ್ಲಿ ಯಜ್ಞವನ್ನೂ, ಅರ್ಪಣೆಯನ್ನೂ ನಿಲ್ಲಿಸುವನು. ದೇವಾಲಯದಲ್ಲಿ ಹಾಳುಮಾಡುವ ಅಸಹ್ಯ ವಸ್ತುವನ್ನು ಅವನು ಸ್ಥಾಪಿಸುವನು. ಇದು ಅವನ ಮೇಲೆ ನಿರ್ಣಯವಾದದ್ದು, ಸುರಿಯುವ ತನಕ ಇರುವುದು,” ಎಂದು ಹೇಳಿದನು.</verse>
			</chapter>
			<chapter number="10">
				<verse number="1">ಪಾರಸಿಯ ಅರಸ ಕೋರೆಷನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬೇಲ್ತೆಶಚ್ಚರನೆಂಬ ದಾನಿಯೇಲನಿಗೆ ಒಂದು ಪ್ರಕಟಣೆಯಾಯಿತು. ಅದರ ಸಂದೇಶವು ಸತ್ಯವಾದದ್ದು. ಅದು ಮಹಾ ಯುದ್ಧ ವಿಷಯವಾಗಿದೆ. ಸಂದೇಶದ ಅರ್ಥವು ಅವನಿಗೆ ಒಂದು ದರ್ಶನದಲ್ಲಿ ಬಂದಿತು.</verse>
				<verse number="2">ಆ ಸಮಯದಲ್ಲಿ ದಾನಿಯೇಲನೆಂಬ ನಾನು, ಮೂರು ವಾರಗಳವರೆಗೂ ದುಃಖಪಡುತ್ತಿದ್ದೆನು.</verse>
				<verse number="3">ಆ ಮೂರು ವಾರಗಳು ಕಳೆಯುವವರೆಗೂ, ನಾನು ರುಚಿಕರವಾದ ರೊಟ್ಟಿಯನ್ನು ತಿನ್ನಲಿಲ್ಲ. ಮಾಂಸವನ್ನಾದರೂ, ದ್ರಾಕ್ಷಾರಸವನ್ನಾದರೂ ನನ್ನ ಬಾಯಿಗೆ ಮುಟ್ಟಿಸಲಿಲ್ಲ. ನಾನು ಎಣ್ಣೆಯನ್ನು ಹಚ್ಚಿಕೊಳ್ಳಲೇ ಇಲ್ಲ.</verse>
				<verse number="4">ಮೊದಲನೆಯ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ, ನಾನು ಟೈಗ್ರಿಸ್ ಎಂಬ ಮಹಾನದಿಯ ದಡದ ಮೇಲೆ ಇರುವಾಗ,</verse>
				<verse number="5">ನಾನು ನನ್ನ ಕಣ್ಣುಗಳನ್ನೆತ್ತಿ ಮೇಲಕ್ಕೆ ನೋಡಿದೆನು. ಆಗ, ನಾರುಮಡಿಯನ್ನು ಧರಿಸಿದ್ದ ಒಬ್ಬ ಮನುಷ್ಯನನ್ನು ಕಂಡೆನು. ಆತನ ನಡುವು ಊಫಜಿನ ಅತ್ಯುತ್ತಮ ಬಂಗಾರದಿಂದ ಬಿಗಿದಿತ್ತು.</verse>
				<verse number="6">ಆತನ ದೇಹವು ಪೀತರತ್ನದ ಹಾಗೆಯೂ, ಆತನ ಮುಖವು ಮಿಂಚಿನಂತೆಯೂ ಹೊಳೆಯುತ್ತಿತ್ತು. ಅವನ ಕಣ್ಣುಗಳು ಉರಿಯುವ ಬೆಂಕಿಯ ದೀಪದಂತೆ ಇದ್ದವು. ಅವನ ತೋಳುಗಳೂ, ಕಾಲುಗಳೂ ಬೆಳಗಿನ ಕಂಚಿನ ಕಾಂತಿಯಾಗಿಯೂ; ಆತನ ಮಾತುಗಳ ಶಬ್ದವು, ಜನಸಮೂಹದ ಸಪ್ಪಳದ ಹಾಗೆಯೂ ಇದ್ದವು.</verse>
				<verse number="7">ದಾನಿಯೇಲನೆಂಬ ನಾನು ಒಬ್ಬನೇ ಆ ದರ್ಶನವನ್ನು ನೋಡಿದೆನು. ನನ್ನ ಸಂಗಡವಿದ್ದ ಜನರು ಆ ದರ್ಶನವನ್ನು ನೋಡಲಿಲ್ಲ. ಆದರೆ ಅವರು ಭಯಭ್ರಾಂತರಾಗಿ ಓಡಿಹೋಗಿ ಅಡಗಿಕೊಂಡರು.</verse>
				<verse number="8">ನಾನು ಒಬ್ಬನೇ ಉಳಿದು, ಈ ಅದ್ಭುತ ದರ್ಶನವನ್ನು ನೋಡಿದೆನು. ನನ್ನಲ್ಲಿ ತ್ರಾಣವು ಇರಲಿಲ್ಲ. ನನ್ನ ಮುಖವು ನನ್ನಲ್ಲಿ ಕುಂದಿಹೋಯಿತು. ನನಗೆ ತ್ರಾಣವು ಇಲ್ಲದೆ ಹೋಯಿತು.</verse>
				<verse number="9">ಆದರೂ ನಾನು ಆತನ ಮಾತುಗಳ ಧ್ವನಿಯನ್ನು ಕೇಳಿದೆನು. ಆತನ ಮಾತುಗಳ ಧ್ವನಿಯನ್ನು ಕೇಳಿದಾಗ, ಮುಖ ಕೆಳಗೆಮಾಡಿ ಗಾಢನಿದ್ರೆಯಲ್ಲಿದ್ದೆನು. ನನ್ನ ಮುಖ ನೆಲದ ಕಡೆ ಇತ್ತು.</verse>
				<verse number="10">ಒಂದು ಕೈ ನನ್ನನ್ನು ಮುಟ್ಟಿ, ನನ್ನ ಮೊಣಕಾಲುಗಳೂ, ನನ್ನ ಅಂಗೈಗಳೂ ನಡುಗುವಂತೆ ಮಾಡಿತು.</verse>
				<verse number="11">ಆತನು ನನಗೆ, “ದಾನಿಯೇಲನೇ, ಅತಿ ಪ್ರಿಯನಾದ ಮನುಷ್ಯನೇ, ನಾನು ನಿನಗೆ ಹೇಳುವ ಮಾತುಗಳನ್ನು ತಿಳಿದುಕೊಂಡು ಸ್ಥಿರವಾಗಿ ನಿಲ್ಲು. ಏಕೆಂದರೆ ನಾನು ಈಗ ನಿನ್ನ ಬಳಿಗೆ ಕಳುಹಿಸಲಾಗಿದ್ದೇನೆ,” ಎಂದು ಹೇಳಿದನು. ಅವನು ಈ ಮಾತನ್ನು ಹೇಳಿದ ಮೇಲೆ, ನಾನು ನಡುಗುತ್ತಲೇ ನಿಂತೆನು.</verse>
				<verse number="12">ಆಗ ಅವನು ನನಗೆ, “ದಾನಿಯೇಲನೇ, ನೀನು ಭಯಪಡಬೇಡ. ಏಕೆಂದರೆ ನೀನು ತಿಳಿದುಕೊಳ್ಳುವುದಕ್ಕೂ, ನಿನ್ನ ದೇವರ ಮುಂದೆ ನಿನ್ನನ್ನು ತಗ್ಗಿಸಿಕೊಳ್ಳುವುದಕ್ಕೂ ಮನಸ್ಸಿಟ್ಟ ಮೊದಲನೆಯ ದಿನದಲ್ಲಿಯೇ ನಿನ್ನ ಪ್ರಾರ್ಥನೆಯು ದೇವರಿಗೆ ಮುಟ್ಟಿತು. ಆ ನಿನ್ನ ಮಾತುಗಳ ನಿಮಿತ್ತವಾಗಿಯೇ ನಾನು ಬಂದಿದ್ದೇನೆ.</verse>
				<verse number="13">ಆದರೆ ಪಾರಸಿಯ ರಾಜ್ಯದ ರಾಜಪುತ್ರನು ಇಪ್ಪತ್ತೊಂದು ದಿನ ನನ್ನನ್ನು ಎದುರಿಸಿ ನಿಂತನು. ಆದರೆ ಮುಖ್ಯ ಪ್ರಭುಗಳಲ್ಲಿ ಒಬ್ಬನಾದ ಮೀಕಾಯೇಲನು ನನ್ನ ಸಹಾಯಕ್ಕೆ ಬಂದನು. ಏಕೆಂದರೆ ನಾನು ಆ ಪಾರಸಿಯ ಅರಸನಿಂದ ತಡೆಹಿಡಿಯಲಾಗಿದ್ದೆನು.</verse>
				<verse number="14">ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಸಂಭವಿಸುವುದು ಎಂಬುದನ್ನು ತಿಳಿಸುವುದಕ್ಕೋಸ್ಕರ ನಾನೀಗ ಬಂದಿದ್ದೇನೆ. ಏಕೆಂದರೆ ದರ್ಶನವು ಮುಂದೆ ಬರಲಿಕ್ಕಿರುವ ಸಮಯವನ್ನು ಕುರಿತಾಗಿರುತ್ತದೆ,” ಎಂದನು.</verse>
				<verse number="15">ಅವನು ನನಗೆ ಈ ಮಾತುಗಳನ್ನು ಹೇಳುತ್ತಿದ್ದಾಗ, ನಾನು ನನ್ನ ಮುಖವನ್ನು ನೆಲದ ಕಡೆಗೆ ತಿರುಗಿಸಿ ಸುಮ್ಮನಿದ್ದೆನು.</verse>
				<verse number="16">ಆಗ ಮಾನವನಂತೆ ಇರುವ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದನು. ನಾನು ಬಾಯಿತೆರೆದು ಮಾತನಾಡಿ, ನನ್ನ ಮುಂದೆ ನಿಂತಿದ್ದವನಿಗೆ, “ನನ್ನ ಒಡೆಯನೇ, ಆ ದರ್ಶನದ ನಿಮಿತ್ತ, ನನ್ನ ಸಂಕಟಗಳು ನನ್ನ ಮೇಲೆ ತಿರುಗಿಕೊಂಡಿವೆ, ನಾನು ನಿತ್ರಾಣನಾಗಿದ್ದೇನೆ.</verse>
				<verse number="17">ನನ್ನ ಒಡೆಯನ ದಾಸನಾದ ನನ್ನಂಥವನು ನನ್ನ ಒಡೆಯನಾದ ತಮ್ಮಂಥವರ ಸಂಗಡ ಹೇಗೆ ಮಾತಾಡಬಹುದು? ನನ್ನ ತ್ರಾಣವು ನನ್ನಲ್ಲಿ ಉಳಿಯಲಿಲ್ಲ, ಉಸಿರಾಡಿಸಲೂ ಆಗದು.”</verse>
				<verse number="18">ಆಮೇಲೆ ಪುನಃ ಮನುಷ್ಯನಂತಿದ್ದ ಒಬ್ಬ ನನ್ನನ್ನು ಬಲಪಡಿಸಿ,</verse>
				<verse number="19">“ಅತಿ ಪ್ರಿಯನೇ, ಭಯಪಡಬೇಡ, ನಿನಗೆ ಸಮಾಧಾನವಾಗಲಿ, ಬಲವಾಗಿರು, ಈಗ ಬಲಶಾಲಿಯಾಗಿರು,” ಎಂದನು. ಅವನು ನನ್ನ ಸಂಗಡ ಮಾತನಾಡಿದಾಗ ನಾನು ಬಲವನ್ನು ಹೊಂದಿ, “ನನ್ನ ಒಡೆಯನೇ ಮಾತನಾಡು, ನೀನು ನನ್ನನ್ನು ಬಲಪಡಿಸಿದ್ದೀ,” ಎಂದು ಹೇಳಿದೆನು.</verse>
				<verse number="20">ಅವನು, “ನಾನು ನಿನ್ನ ಹತ್ತಿರ ಬಂದ ಕಾರಣವು ನಿನಗೆ ತಿಳಿಯಿತೇ. ಈಗ ನಾನು ಪಾರಸಿಯದ ರಾಜಪುತ್ರನ ಸಂಗಡ ಯುದ್ಧಮಾಡಲು ಹಿಂದಿರುಗಬೇಕು. ನಾನು ಹೋದ ಮೇಲೆ, ಗ್ರೀಕಿನ ರಾಜಕುಮಾರನು ಬರುವನು.</verse>
				<verse number="21">ಆದರೆ ಸತ್ಯ ಗ್ರಂಥದಲ್ಲಿ ಲಿಖಿತವಾದದ್ದನ್ನು ಈಗ ನಿನಗೆ ತಿಳಿಸುತ್ತೇನೆ. ನಿಮ್ಮ ರಾಜಕುಮಾರನಾದ ಮೀಕಾಯೇಲನ ಹೊರತು ಮತ್ತೆ ಯಾರೂ ಅವರಿಗೆ ವಿರೋಧವಾಗಿ ನನಗೆ ಸಹಕಾರ ಕೊಡುವುದಿಲ್ಲ.”</verse>
			</chapter>
			<chapter number="11">
				<verse number="1">ಮೇದ್ಯರ ಅರಸನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅವರಿಗೆ ಸಹಾಯಮಾಡಿ, ಅವನನ್ನು ರಕ್ಷಿಸಲು ನಾನು ನಿಂತುಕೊಂಡೆನು.</verse>
				<verse number="2">ನಾನು ಈಗ ಸತ್ಯವನ್ನು ತಿಳಿಸುತ್ತೇನೆ. ಪಾರಸಿಯ ದೇಶದಲ್ಲಿ ಇನ್ನೂ ಮೂರು ಅರಸರು ಏಳುವರು. ನಾಲ್ಕನೆಯವನು ಅವರೆಲ್ಲರಿಗಿಂತಲೂ ಬಹಳ ಐಶ್ವರ್ಯವಂತನಾಗಿರುವನು. ಅವನು ತನ್ನ ಐಶ್ವರ್ಯದಿಂದಾಗುವ ಸಾಮರ್ಥ್ಯದಿಂದ ಗ್ರೀಕ್ ರಾಜ್ಯಕ್ಕೆ ವಿರೋಧವಾಗಿ ಎಲ್ಲರನ್ನೂ ಹುರಿದುಂಬಿಸುವನು.</verse>
				<verse number="3">ಆಗ ಬಲವುಳ್ಳ ಒಬ್ಬ ಅರಸನು ಉದಯಿಸುವನು. ಅವನು ಮಹಾಅಧಿಕಾರದಿಂದ ಆಳುವನು ಮತ್ತು ತನ್ನ ಇಷ್ಟದ ಪ್ರಕಾರ ಮಾಡುವನು.</verse>
				<verse number="4">ಅವನು ಉದಯಿಸಿದ ನಂತರ, ಅವನ ರಾಜ್ಯ ಒಡೆದು ಆಕಾಶದ ನಾಲ್ಕು ದಿಕ್ಕುಗಳಿಗೂ ಪಾಲಾಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ರಾಜ್ಯವು ಪ್ರಬಲವಾಗಿದ್ದಂತೆ ಅದು ಇನ್ನು ಪ್ರಬಲವಾಗದು. ಏಕೆಂದರೆ ಅವನ ರಾಜ್ಯವನ್ನು ಅವನಿಂದ ಕಿತ್ತುಕೊಂಡು ಇತರರಿಗೆ ನೀಡಲಾಗುವುದು.</verse>
				<verse number="5">ದಕ್ಷಿಣದ ಅರಸನು ಬಲಿಷ್ಠನಾಗುವನು. ಆದರೆ ಅವನ ಸೇನಾಪತಿಗಳಲ್ಲಿ ಒಬ್ಬನು ಅವನಿಗಿಂತ ಬಲಿಷ್ಠನಾಗುವನು ಮತ್ತು ಅವನ ಆಳ್ವಿಕೆಯು ಮಹಾ ಆಳ್ವಿಕೆಯಾಗುವುದು.</verse>
				<verse number="6">ಕೆಲವು ವರ್ಷಗಳ ನಂತರ ಅವರಿಬ್ಬರು ಒಪ್ಪಂದ ಮಾಡಿಕೊಳ್ಳುವರು. ದಕ್ಷಿಣದ ಅರಸನ ಮಗಳು ಒಪ್ಪಂದ ಮಾಡಿಕೊಳ್ಳಲು ಉತ್ತರದ ಅರಸನ ಬಳಿಗೆ ಬರುವಳು. ಆದರೆ ಅವಳು ತನ್ನ ಅಧಿಕಾರವನ್ನು ಉಳಿಸಿಕೊಳ್ಳುವುದಿಲ್ಲ. ಅವನೂ, ಅವನ ಅಧಿಕಾರವೂ ನಿಲ್ಲುವುದಿಲ್ಲ. ಆ ದಿನಗಳಲ್ಲಿ ಅವಳೂ ಅವಳನ್ನು ಕರೆತಂದವರೂ ಮತ್ತು ಅವಳ ತಂದೆಯೂ ಅವಳಿಗೆ ಸಹಾಯ ಮಾಡಿದವರು ಯಾರೂ ಉಳಿಯುವುದಿಲ್ಲ.</verse>
				<verse number="7">ಅವಳ ವಂಶದಲ್ಲಿಯ ಒಬ್ಬನು ಎದ್ದು ಆ ಸ್ಥಾನದಲ್ಲಿ ನಿಂತು, ಸೈನ್ಯದೊಂದಿಗೆ ಬಂದು, ಉತ್ತರದ ಅರಸನ ಕೋಟೆಯೊಳಗೆ ನುಗ್ಗಿ, ಅವರ ವಿರುದ್ಧ ಹೋರಾಡಿ ಗೆಲ್ಲುವನು.</verse>
				<verse number="8">ಅವರ ದೇವರುಗಳನ್ನೂ, ಅವರ ವಿಗ್ರಹಗಳನ್ನೂ ಅವರ ಬೆಳ್ಳಿ ಬಂಗಾರಗಳ ಪಾತ್ರೆಗಳನ್ನೂ ಅವನು ಸೂರೆಮಾಡಿ, ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋಗುವನು. ಕೆಲವು ವರ್ಷಗಳವರೆಗೆ ಅವನು ಉತ್ತರದ ಅರಸನ ಮೇಲೆ ಬಿಟ್ಟುಬಿಡುವನು.</verse>
				<verse number="9">ಆಮೇಲೆ ಉತ್ತರದ ಅರಸನು, ದಕ್ಷಿಣದ ಅರಸನ ಮೇಲೆ ಯುದ್ಧಕ್ಕೆ ಬರುವನು. ಆದರೆ ತನ್ನ ಸ್ವದೇಶಕ್ಕೆ ಹಿಂದಿರುಗಿ ಹೋಗುವನು.</verse>
				<verse number="10">ಅವನ ಮಕ್ಕಳು ಯುದ್ಧಕ್ಕೆ ಸಿದ್ಧರಾಗಿ ದೊಡ್ಡ ಸೈನ್ಯ ಕೂಡಿಸುವರು. ಆ ಸೈನ್ಯವು ನಿಬಂಧಿಸಲಾಗದ ಪ್ರವಾಹದಂತೆ ಹರಿದುಬಂದು, ಯುದ್ಧವನ್ನು ಅವನ ಕೋಟೆಯವರೆಗೆ ನಡೆಸುವರು.</verse>
				<verse number="11">ಆಗ ದಕ್ಷಿಣದ ಅರಸನು ಕೋಪಿಸಿಕೊಂಡು ಹೊರಟು ಮಹಾ ಸೈನ್ಯವನ್ನು ಕೂಡಿಸಿದನು. ಉತ್ತರದ ಅರಸನ ಸಂಗಡ ಯುದ್ಧಮಾಡುವನು. ಆದರೆ ಆ ಮಹಾ ಸೈನ್ಯವು ದಕ್ಷಿಣ ಅರಸನ ಕೈವಶವಾಗುವುದು.</verse>
				<verse number="12">ಆ ಮಹಾ ಸೈನ್ಯವನ್ನು ಅವನು ತೆಗೆದುಹಾಕಿದ ಮೇಲೆ, ಅವನ ಹೃದಯವು ಹೆಚ್ಚಳ ಪಡುವುದು. ಸಹಸ್ರಾರು ಸೈನಿಕರನ್ನು ಬೀಳಿಸಿದ್ದರೂ, ಪ್ರಾಬಲ್ಯಕ್ಕೆ ಬರುವುದಿಲ್ಲ.</verse>
				<verse number="13">ಏಕೆಂದರೆ ಉತ್ತರದ ಅರಸನು ಪುನಃ ತಿರುಗಿಕೊಂಡು ಮೊದಲನೆಯದಕ್ಕಿಂತಲೂ ದೊಡ್ಡ ಸೈನ್ಯವನ್ನು ನಿಲ್ಲಿಸಿ, ಕೆಲವು ವರ್ಷಗಳಾದ ಮೇಲೆ ದೊಡ್ಡ ಸೈನ್ಯದ ಸಂಗಡವೂ, ಬಹಳ ಆಯುಧಗಳ ಸಂಗಡವೂ ನಿಶ್ಚಯವಾಗಿ ಬರುವನು.</verse>
				<verse number="14">ಅದೇ ಕಾಲದಲ್ಲಿ ದಕ್ಷಿಣದ ಅರಸನಿಗೆ ವಿರೋಧವಾಗಿ ಅನೇಕರು ಎದುರು ನಿಲ್ಲುವರು. ನಿನ್ನ ಜನರಲ್ಲಿ ಹಿಂಸಾಕಾರರು ಆ ದರ್ಶನವನ್ನು ಸ್ಥಾಪಿಸಬೇಕೆಂದು ತಿರುಗಿ ಬೀಳುವರು. ಆದರೆ ಸೋತುಹೋಗುವರು.</verse>
				<verse number="15">ಆಗ ಉತ್ತರದ ಅರಸನು ಬಂದು ಮುತ್ತಿಗೆ ಹಾಕಿ, ದಿಬ್ಬವನ್ನು ಕೆಡವಿ, ಕೋಟೆಯುಳ್ಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವನು. ದಕ್ಷಿಣದ ಭುಜಬಲವಾದರೂ ಅವನು ಆಯ್ದುಕೊಂಡ ಜನರಾದರೂ ಎದುರಿಸಿ ನಿಲ್ಲುವುದಕ್ಕೆ ಅಶಕ್ತರಾಗುವರು.</verse>
				<verse number="16">ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು. ಯಾರೂ ಅವನ ಮುಂದೆ ನಿಲ್ಲಲಾರರು. ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದನ್ನು ನಾಶಮಾಡುವ ಅಧಿಕಾರ ಹೊಂದಿರುವನು.</verse>
				<verse number="17">ಅವನು ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು, ದಕ್ಷಿಣದ ರಾಜನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವನು. ಅವನ ರಾಜ್ಯವನ್ನು ಉರುಳಿಸಲು ಅವನಿಗೆ ಮಗಳನ್ನು ಕೊಡುವನು. ಆದರೆ ಅವನ ಯೋಜನೆಗಳು ಜಯಹೊಂದುವುದಿಲ್ಲ. ಇಲ್ಲವೆ ಅವನಿಗೆ ಸಹಾಯ ಮಾಡುವುದಿಲ್ಲ.</verse>
				<verse number="18">ಇದಾದ ಮೇಲೆ ಅವನು ತನ್ನ ಮುಖವನ್ನು ದ್ವೀಪಗಳ ಕಡೆಗೆ ತಿರುಗಿಸಿ, ಅನೇಕರನ್ನು ವಶಪಡಿಸಿಕೊಳ್ಳುವನು. ಆದರೆ ಒಬ್ಬ ಅಧಿಪತಿಯು ಅವನ ಅಹಂಕಾರವನ್ನು ಅಡಗಿಸಿಬಿಡುವನು. ಆ ಅಹಂಕಾರವನ್ನು ತನ್ನ ಮೇಲೆ ಹಾಕಿಕೊಳ್ಳದೆ, ಅವನ ಮೇಲೆ ತಿರುಗಿಸಿ ಬಿಡುವನು.</verse>
				<verse number="19">ಆಗ ಅವನು ತನ್ನ ಸ್ವದೇಶದ ಕೋಟೆಗೆ ಮುಖವನ್ನು ತಿರುಗಿಸುವನು. ಆದರೆ ಅವನು ಎಡವಿಬಿದ್ದು, ಕಾಣದೆ ಹೋಗುವನು.</verse>
				<verse number="20">ಅವನ ಉತ್ತರಾಧಿಕಾರಿಯು ಅರಸೊತ್ತಿಗೆಯ ಸೊಗಸನ್ನು ಕಾದುಕೊಳ್ಳುವುದಕ್ಕಾಗಿ ಸುಂಕ ವಸೂಲಿ ಮಾಡುವವನನ್ನು ಕಳುಹಿಸುವನು. ಆದರೂ ಕೆಲವೇ ವರ್ಷಗಳಲ್ಲಿ ಅವನು ನಾಶ ಹೊಂದುವನು. ಇದು ಕೋಪದಿಂದಾಗಲಿ ಇಲ್ಲವೆ ಯುದ್ಧದಿಂದಾಗಲಿ ಆಗುವುದಿಲ್ಲ.</verse>
				<verse number="21">ಅವನ ಸ್ಥಾನದಲ್ಲಿ ಒಬ್ಬ ನೀಚನು ನಿಲ್ಲುವನು. ಅವನಿಗೆ ರಾಜಮರ್ಯಾದೆಯನ್ನು ಕೊಡುವುದಿಲ್ಲ. ಆದರೆ ಅವನು ಸಮಾಧಾನವಾಗಿ ನಯನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.</verse>
				<verse number="22">ಪ್ರವಾಹದಂತಿರುವ ಆ ಸೈನ್ಯವೂ, ಒಡಂಬಡಿಕೆಯ ರಾಜಕುಮಾರನೂ ಅವನ ರಭಸಕ್ಕೆ ಸಿಕ್ಕಿ ಒಡೆದುಹೋಗಿ ನಾಶವಾಗುವರು.</verse>
				<verse number="23">ಅವನ ಸಂಗಡ ಒಪ್ಪಂದ ಮಾಡಿಕೊಂಡ ಮೇಲೆ ಕಪಟವಾಗಿ ನಡೆಯುವನು. ಕೆಲವು ಜನರ ಸಹಾಯದಿಂದ ಅಧಿಕಾರ ಪಡೆಯುವನು.</verse>
				<verse number="24">ನೆಮ್ಮದಿಯ ಕಾಲದಲ್ಲಿ ಸಂಸ್ಥಾನಗಳ ಫಲವತ್ತಾದ ಪ್ರದೇಶಗಳಲ್ಲಿ ನುಗ್ಗಿ, ತಂದೆ ತಾತಂದಿರು ಮಾಡದ ಕಾರ್ಯಗಳನ್ನು ಮಾಡುವನು. ಸೂರೆ, ಸುಲಿಗೆ, ಕೊಳ್ಳೆ ಹೊಡೆದವುಗಳನ್ನು, ತನ್ನನ್ನು ಅವರಿಗೆ ಹಂಚುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕ್ಲುಪ್ತಕಾಲದ ತನಕ ಕಲ್ಪಿಸುತ್ತಿರುವನು.</verse>
				<verse number="25">ಅವನು ದಕ್ಷಿಣದ ಅರಸನಿಗೆ ವಿರೋಧವಾಗಿ ತನ್ನ ಶಕ್ತಿಯಿಂದಲೂ ಧೈರ್ಯದಿಂದಲೂ ದೊಡ್ಡ ಸೈನ್ಯದ ಸಂಗಡ ಯುದ್ಧಕ್ಕೆ ಸನ್ನದ್ಧನಾಗುವನು, ಆದರೆ ನಿಲ್ಲಲಾರದೆ ಹೋಗುವನು. ಏಕೆಂದರೆ ಅವನಿಗೆ ವಿರೋಧವಾಗಿ ಕುಯುಕ್ತಿಗಳನ್ನು ಕಲ್ಪಿಸುವರು.</verse>
				<verse number="26">ಅವನ ರಾಜ ಭೋಜನದಲ್ಲಿ ಭಾಗವನ್ನು ತಿಂದವರೇ, ಅವನನ್ನು ನಾಶಮಾಡುವರು. ಅವನ ಸೈನ್ಯವು ತುಂಬಿ ತುಳುಕುವುದು ಮತ್ತು ಅನೇಕರು ಹತರಾಗುವರು.</verse>
				<verse number="27">ಈ ಇಬ್ಬರ ಅರಸನ ಹೃದಯಗಳು ಕೇಡನ್ನು ಮಾಡುವಂತವುಗಳಾಗಿರುವುವು. ಒಂದೇ ಮೇಜಿನಲ್ಲಿ ಕುಳಿತು ಒಬ್ಬರಿಗೊಬ್ಬರು ಸುಳ್ಳು ಹೇಳುವರು. ಆದರೆ ಅದು ಅನುಕೂಲವಾಗದು. ಏಕೆಂದರೆ ಅದು ಹೇಗಾದರೂ ನಿಶ್ಚಿತ ಕಾಲದಲ್ಲಿಯೇ ಅಂತ್ಯವಾಗುವುದು.</verse>
				<verse number="28">ಆಗ ಉತ್ತರದ ಅರಸನು ಮಹಾ ಐಶ್ವರ್ಯದೊಂದಿಗೆ ಸ್ವದೇಶಕ್ಕೆ ಹಿಂದಿರುಗುವನು, ಆದರೆ ಅವನ ಹೃದಯವು ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿರುವುದು; ಅವನು ಇದಕ್ಕೆ ವಿರುದ್ಧವಾಗಿ ಕಾರ್ಯಸಾಧಿಸಿ, ಸ್ವಂತ ದೇಶಕ್ಕೆ ಹಿಂದಿರುಗುವನು.</verse>
				<verse number="29">ನೇಮಕವಾದ ಕಾಲದಲ್ಲಿಯೇ ಅವನು ಹಿಂದಿರುಗಿ ದಕ್ಷಿಣಕ್ಕೆ ಬರುವನು, ಆದರೆ ಮೊದಲು ಆದಂತೆ ಎರಡನೆಯ ಸಾರಿ ಆಗುವುದಿಲ್ಲ.</verse>
				<verse number="30">ಏಕೆಂದರೆ ಕಿತ್ತೀಮಿನ ಹಡಗುಗಳು ಅವನಿಗೆ ವಿರೋಧವಾಗಿ ಬರುವುವು. ಆದ್ದರಿಂದ ಅವನು ಎದೆಗುಂದಿ, ಪರಿಶುದ್ಧ ಒಡಂಬಡಿಕೆಗೆ ವಿರೋಧವಾಗಿ ಕೋಪಿಸಿಕೊಳ್ಳುವನು. ಹಿಂದಿರುಗಿ ಬಂದು ಪರಿಶುದ್ಧ ಒಡಂಬಡಿಕೆಯನ್ನು ತೊರೆದವರಿಗೆ ದಯೆ ತೋರಿಸುವನು.</verse>
				<verse number="31">ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲಸುಮಾಡಿ, ನಿತ್ಯ ಯಜ್ಞವನ್ನು ನಿಲ್ಲಿಸುವುದು. ಹಾಳುಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವುದು.</verse>
				<verse number="32">ಒಡಂಬಡಿಕೆಗೆ ವಿರೋಧವಾಗಿ ಕೆಟ್ಟವರಾಗಿ ನಡೆಯುವವರನ್ನು ನಯವಾದ ಮಾತುಗಳಿಂದ ಕೆಡಿಸುವನು, ಆದರೆ ತಮ್ಮ ದೇವರನ್ನು ಅರಿಯುವ ಜನರು ದೃಢಚಿತ್ತರಾಗಿ ಎದುರಿಸುವರು.</verse>
				<verse number="33">ಜನರಲ್ಲಿ ಬುದ್ಧಿವಂತರಾದವರು ಅನೇಕರಿಗೆ ಬೋಧಿಸುವರು, ಆದರೂ ಖಡ್ಗದಿಂದಲೂ ಬೆಂಕಿಯಿಂದಲೂ ಸೆರೆಯಿಂದಲೂ ಕೊಳ್ಳೆಯಿಂದಲೂ ಕೆಲಕಾಲ ಸಿಕ್ಕಿ ಬೀಳುವರು.</verse>
				<verse number="34">ಅವರು ಬೀಳುವಾಗ ಅವರಿಗೆ ಸ್ವಲ್ಪ ಸಹಾಯ ದೊರೆಯುವುದು, ಆದರೆ ಅನೇಕರು ವಂಚನೆಯ ನುಡಿಗಳಿಂದ ಅವರನ್ನು ಸೇರಿಕೊಳ್ಳುವರು.</verse>
				<verse number="35">ಇದಲ್ಲದೆ ಅಂತ್ಯಕಾಲದವರೆಗೆ ಜ್ಞಾನಿಗಳನ್ನು ಶೋಧಿಸುವುದಕ್ಕೂ ಅದರಲ್ಲಿ ಅನೇಕರು ಬೀಳುವರು; ಏಕೆಂದರೆ ಇದು ನೇಮಕವಾದ ಸಮಯದಲ್ಲಿ ಬರುವುದು.</verse>
				<verse number="36">ಅರಸನು ತನ್ನ ಇಷ್ಟದ ಪ್ರಕಾರ ಮಾಡುವನು. ತನ್ನನ್ನು ತಾನೇ ಹೆಚ್ಚಿಸಿಕೊಂಡು, ತನ್ನನ್ನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನನ್ನಾಗಿ ಮಾಡಿಕೊಂಡು, ದೇವರುಗಳ ದೇವರಿಗೆ ವಿರೋಧವಾಗಿ ಆಶ್ಚರ್ಯವಾದ ಸಂಗತಿಗಳನ್ನು ಮಾತನಾಡಿ, ರೋಷವು ತೀರುವವರೆಗೂ ವೃದ್ಧಿಯಾಗಿರುವನು. ಹೀಗೆ ನಿಶ್ಚಯವಾದದ್ದು ನೆರವೇರಲೇಬೇಕು.</verse>
				<verse number="37">ಅವನು ತನ್ನ ಪಿತೃಗಳ ದೇವರನ್ನಾಗಲೀ, ಸ್ತ್ರೀಯರಿಂದ ಅಪೇಕ್ಷಿಸಿದವರನ್ನಾಗಲೀ ಅವನು ಲಕ್ಷಿಸುವುದಿಲ್ಲ, ಯಾವ ದೇವರನ್ನೂ ಲಕ್ಷಿಸುವುದಿಲ್ಲ; ಆದರೆ ಅವನು ಎಲ್ಲವುಗಳಿಗಿಂತ ಹೆಚ್ಚಿ, ತನ್ನನ್ನು ತಾನೇ ಹೆಚ್ಚಿಸಿಕೊಂಡಿದ್ದಾನೆ.</verse>
				<verse number="38">ಅವನು ಕುಲ ದೇವರಿಗೆ ಬದಲಾಗಿ, ದುರ್ಗ ದೇವರನ್ನು ಘನಪಡಿಸುವನು. ಪೂರ್ವಜರಿಗೆ ತಿಳಿಯದ ದೇವರನ್ನು ಬೆಳ್ಳಿ ಬಂಗಾರದಿಂದಲೂ, ರತ್ನಗಳಿಂದಲೂ, ಅಮೂಲ್ಯ ಕೊಡುಗೆಗಳಿಂದಲೂ ಗೌರವಿಸುವನು.</verse>
				<verse number="39">ಅವನು ಅನ್ಯ ದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ತನಗೆ ಮೆಚ್ಚುಗೆಯಾದವರನ್ನು ಹೆಚ್ಚಾಗಿ ಸತ್ಕರಿಸುವನು. ಅವರನ್ನು ಬಹುಜನರ ಮೇಲೆ ಅಧಿಕಾರಿಗಳನ್ನಾಗಿ ನೇಮಿಸುವನು. ಹಣಕ್ಕಾಗಿ ದೇಶವನ್ನೇ ಹಂಚಿಬಿಡುವನು.</verse>
				<verse number="40">ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂದಿಗೂ, ಸವಾರರೊಂದಿಗೂ, ಅನೇಕ ಹಡಗುಗಳೊಂದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದುಹೋಗುವನು.</verse>
				<verse number="41">ಅವನು ರಮ್ಯವಾದ ದೇಶದೊಳಕ್ಕೂ ನುಗ್ಗುವನು; ಅನೇಕ ದೇಶಗಳನ್ನು ನಾಶಮಾಡುವನು; ಆದರೆ ಎದೋಮು, ಮೋವಾಬು ಮತ್ತು ಅಮ್ಮೋನಿಯರಲ್ಲಿ ಮುಖ್ಯಸ್ಥರು ಅವನ ಕೈಯಿಂದ ತಪ್ಪಿಸಿಕೊಳ್ಳುವರು.</verse>
				<verse number="42">ಅವನು ಇತರ ದೇಶಗಳ ಮೇಲೂ ತನ್ನ ಕೈಯನ್ನು ಚಾಚುವನು; ಈಜಿಪ್ಟ್ ದೇಶವು ತಪ್ಪಿಸಿಕೊಳ್ಳದು.</verse>
				<verse number="43">ಬಂಗಾರ ಬೆಳ್ಳಿ ಬೊಕ್ಕಸಗಳ ಮೇಲೆಯೂ, ಈಜಿಪ್ಟಿನ ಎಲ್ಲಾ ಅಮೂಲ್ಯ ವಸ್ತುಗಳ ಮೇಲೆಯೂ ಅವನಿಗೆ ಅಧಿಕಾರವಿರುವುದು. ಲಿಬಿಯದವರೂ ಕೂಷ್ಯರೂ ಅವನಿಗೆ ಅಧೀನರಾಗುವರು.</verse>
				<verse number="44">ಆದರೆ ಪೂರ್ವದಿಂದಲೂ, ಉತ್ತರದಿಂದಲೂ ಬರುವ ಸುದ್ದಿಗಳು ಅವನನ್ನು ಹೆದರಿಸುವುವು. ಆದ್ದರಿಂದ ಅವನು ಮಹಾ ಉಗ್ರವಾಗಿ ಅನೇಕರನ್ನು ಸಂಹರಿಸುವುದಕ್ಕೂ, ನಿರ್ಮೂಲ ಮಾಡುವುದಕ್ಕೂ ಹೊರಡುವನು.</verse>
				<verse number="45">ಅವನು ತನ್ನ ರಾಜ ಗುಡಾರಗಳನ್ನು ಸಮುದ್ರದ ನಡುವೆ ರಮ್ಯವಾದ ಪರಿಶುದ್ಧ ಪರ್ವತದಲ್ಲಿ ಹಾಕುವನು. ಆದರೂ ಅವನು ಕೊನೆಗಾಣುವನು. ಯಾರೂ ಅವನಿಗೆ ಸಹಾಯ ಮಾಡರು.</verse>
			</chapter>
			<chapter number="12">
				<verse number="1">“ಆ ಕಾಲದಲ್ಲಿ ನಿನ್ನ ಜನರನ್ನು ಕಾಪಾಡುವುದಕ್ಕಾಗಿ ಮಹಾರಾಜಕುಮಾರನಾದ ಮೀಕಾಯೇಲನು ಏಳುವನು. ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನವರೆಗೂ ಸಂಭವಿಸದಂತಹ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಎಂದರೆ ಜೀವ ಪುಸ್ತಕದಲ್ಲಿ ಯಾರ ಹೆಸರು ಬರೆಯಲಾಗಿದೆಯೋ, ಅವರೆಲ್ಲರೂ ಬಿಡುಗಡೆಯಾಗುವರು.</verse>
				<verse number="2">ಭೂಮಿಯ ಧೂಳಿನೊಳಗೆ ನಿದ್ರೆ ಮಾಡುವವರಲ್ಲಿ ಅನೇಕರು ಎಚ್ಚತ್ತು, ಕೆಲವರು ನಿತ್ಯಜೀವವನ್ನೂ ಮತ್ತು ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.</verse>
				<verse number="3">ಜ್ಞಾನಿಗಳಾದವರು ಆಕಾಶದ ಕಾಂತಿಯ ಹಾಗೆಯೂ, ಅನೇಕರನ್ನು ನೀತಿಯ ಕಡೆಗೆ ತಿರುಗಿಸುವರು, ನಕ್ಷತ್ರಗಳ ಹಾಗೆ ಎಂದೆಂದಿಗೂ ಪ್ರಕಾಶಿಸುವರು, ನಿತ್ಯ ಅವಮಾನವನ್ನು ಅನುಭವಿಸುವರು.</verse>
				<verse number="4">ಆದರೆ ದಾನಿಯೇಲನೇ ನೀನು, ಅಂತ್ಯಕಾಲದವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆದಿರುವ ಆ ಗ್ರಂಥಕ್ಕೆ ಮುದ್ರೆ ಹಾಕು. ಅನೇಕರು ಅತ್ತಿತ್ತ ಓಡಾಡುವರು, ಜ್ಞಾನವು ಹೆಚ್ಚಾಗುವುದು,” ಎಂದು ಹೇಳಿದನು.</verse>
				<verse number="5">ಆಗ ದಾನಿಯೇಲನೆಂಬ ನಾನು ನೋಡಿದೆನು. ಅವರಿಬ್ಬರಲ್ಲಿ ಒಬ್ಬನು ನದಿಯ ತೀರದ ಈ ಕೊನೆಗೂ, ಇನ್ನೊಬ್ಬನು ನದಿಯ ತೀರದ ಆ ಕೊನೆಗೂ ನಿಂತಿದ್ದರು.</verse>
				<verse number="6">ಅವರು ನದಿಯ ನೀರಿನ ಮೇಲೆ ನಿಂತು, ನಾರುಬಟ್ಟೆಯನ್ನು ಧರಿಸಿದ್ದ ಒಬ್ಬನಿಗೆ ಇನ್ನೊಬ್ಬನು, “ಈ ಆಶ್ಚರ್ಯದ ಅಂತ್ಯವು ಎಷ್ಟರವರೆಗೆ ಇರುವುದು?” ಎಂದು ಕೇಳಿದನು.</verse>
				<verse number="7">ನದಿಯ ನೀರಿನ ಮೇಲೆ ನಿಂತು ನಾರುಬಟ್ಟೆಯನ್ನು ಧರಿಸಿ ನಿಂತಿದ್ದ ಮನುಷ್ಯನು ತನ್ನ ಎಡಗೈಯನ್ನೂ ಬಲಗೈಯನ್ನೂ ಆಕಾಶದ ಕಡೆಗೆ ಎತ್ತಿ ಸದಾಕಾಲ ಜೀವಂತರಾಗಿರುವವರ ಮೇಲೆ ಆಣೆಯಿಟ್ಟು, “ಅದು ಒಂದುಕಾಲ, ಎರಡುಕಾಲ, ಅರ್ಧಕಾಲ ಕಳೆಯಬೇಕು; ಕೊನೆಗೆ ಪರಿಶುದ್ಧರ ಬಲವನ್ನು ಮುರಿದ ಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.</verse>
				<verse number="8">ನಾನು ಅದನ್ನು ಕೇಳಿದೆನು, ಆದರೆ ಗ್ರಹಿಸಲಿಲ್ಲ. ಆಗ ನಾನು, “ನನ್ನ ಒಡೆಯನೇ, ಈ ಸಂಗತಿಗಳ ಅಂತ್ಯವೇನು?” ಎಂದು ಕೇಳಿದೆನು.</verse>
				<verse number="9">ಆಗ ಅವನು, “ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು, ಏಕೆಂದರೆ ಈ ಮಾತುಗಳು ಅಂತ್ಯಕಾಲದವರೆಗೂ ಮುಚ್ಚಿ, ಮುದ್ರಿತವಾಗಿವೆ.</verse>
				<verse number="10">ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ಆದರೆ ದುಷ್ಟರು ದುಷ್ಟರಾಗಿಯೇ ಮುಂದುವರಿಯುವರು. ಯಾವ ದುಷ್ಟನೂ ಅರ್ಥಮಾಡಿಕೊಳ್ಳುವುದಿಲ್ಲ. ಆದರೆ ಬುದ್ಧಿವಂತರಾದವರು ಅರಿತುಕೊಳ್ಳುವರು.</verse>
				<verse number="11">“ಪ್ರತಿದಿನದ ಯಜ್ಞವು ಸಕಾಲಕ್ಕೆ ನಿಂತುಹೋಗುವುದು. ಆ ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ, 1,290 ದಿನಗಳು ಕಳೆಯಬೇಕು.</verse>
				<verse number="12">1,335 ದಿನಗಳು ಬರುವವರೆಗೆ ಕಾದಿರುವವನೇ ಭಾಗ್ಯವಂತನು.</verse>
				<verse number="13">“ನೀನು ಅಂತ್ಯದವರೆಗೂ ನಿನ್ನ ಮಾರ್ಗದಲ್ಲಿ ಹೋಗು. ನೀನು ವಿಶ್ರಮಿಸಿಕೊಳ್ಳುವೆ ಮತ್ತು ದಿನಗಳ ಅಂತ್ಯದಲ್ಲಿ ನಿನಗೆ ಪಾಲಾಗಿ ಇಟ್ಟಿರುವ ಬಾಧ್ಯತೆಯನ್ನು ಸ್ವೀಕರಿಸಲು ಎದ್ದು ಬರುವೆ,” ಎಂದು ಹೇಳಿದನು.</verse>
			</chapter>
		</book>
		<book number="28">
			<chapter number="1">
				<verse number="1">ಯೆಹೂದದ ಅರಸರಾದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ದಿನಗಳಲ್ಲಿಯೂ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ದಿನಗಳಲ್ಲಿಯೂ ಬೆಯೇರಿಯನ ಮಗ ಹೋಶೇಯನಿಗೆ ಯೆಹೋವ ದೇವರ ವಾಕ್ಯವು ಬಂದಿತು.</verse>
				<verse number="2">ಯೆಹೋವ ದೇವರು ಹೋಶೇಯನೊಂದಿಗೆ ಮಾತನಾಡಲು ಪ್ರಾರಂಭಿಸಿದಾಗ, ಯೆಹೋವ ದೇವರು ಹೋಶೇಯನಿಗೆ, “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೋ ಮತ್ತು ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ ಈ ದೇಶವು ನನ್ನನ್ನು ತೊರೆದುಬಿಟ್ಟು, ವ್ಯಭಿಚಾರಿಣಿಯಾದ ಹೆಂಡತಿಯಂತೆ ಯೆಹೋವ ದೇವರಿಗೆ ದ್ರೋಹ ಬಗೆದಿದೆ,” ಎಂದು ಹೇಳಿದರು.</verse>
				<verse number="3">ಆಗ ಅವನು ಹೋಗಿ ದಿಬ್ಲಯಿಮನ ಮಗಳಾದ ಗೋಮೆರಳನ್ನು ಮದುವೆಯಾದನು. ಅವಳು ಗರ್ಭಿಣಿಯಾಗಿ ಅವನಿಗೆ ಒಬ್ಬ ಮಗನನ್ನು ಹೆತ್ತಳು.</verse>
				<verse number="4">ಆಗ ಯೆಹೋವ ದೇವರು ಹೋಶೇಯನಿಗೆ, “ಈ ಮಗುವಿಗೆ ಇಜ್ರೆಯೇಲ್ ಎಂದು ಹೆಸರಿಡು. ಏಕೆಂದರೆ ಶೀಘ್ರದಲ್ಲಿಯೇ ನಾನು ಇಜ್ರೆಯೇಲ್ ಕಣಿವೆಯಲ್ಲಿ ರಕ್ತವನ್ನು ಸುರಿಸಿದ ಯೇಹುವಿನ ಮನೆತನದವರ ಮೇಲೆ ಮುಯ್ಯಿತೀರಿಸಿಕೊಳ್ಳುವೆನು. ಇಸ್ರಾಯೇಲ್ ರಾಜ್ಯವನ್ನು ಅಂತ್ಯಗೊಳಿಸುವೆನು.</verse>
				<verse number="5">ಆ ದಿನದಲ್ಲಿ, ನಾನು ಇಸ್ರಾಯೇಲಿನ ಬಿಲ್ಲು ಶಕ್ತಿಯನ್ನು ಇಜ್ರೆಯೇಲ್ ಕಣಿವೆಯಲ್ಲಿ ಮುರಿದು ಹಾಕುವೆನು,” ಎಂದು ಹೇಳಿದರು.</verse>
				<verse number="6">ಗೋಮೆರಳು ಪುನಃ ಗರ್ಭಿಣಿಯಾಗಿ ಹೆಣ್ಣು ಮಗುವನ್ನು ಹೆತ್ತಳು. ಆಗ ಯೆಹೋವ ದೇವರು ಹೋಶೇಯನಿಗೆ, “ಅವಳನ್ನು ‘ಲೋರುಹಾಮಾ ’ ಎಂಬ ಹೆಸರಿನಿಂದ ಕರೆ. ಏಕೆಂದರೆ ನಾನು ಇನ್ನು ಮೇಲೆ ಇಸ್ರಾಯೇಲಿನ ಮನೆತನದವರಿಗೆ ಪ್ರೀತಿ ತೋರಿಸುವುದೇ ಇಲ್ಲ, ಅವರನ್ನು ಯಾವ ರೀತಿಯೂ ಕ್ಷಮಿಸುವದಿಲ್ಲ.</verse>
				<verse number="7">ಆದರೆ ನಾನು ಯೆಹೂದದ ಮನೆತನದವರನ್ನು ಪ್ರೀತಿಸಿ ಅವರನ್ನು ಬಿಲ್ಲುಬಾಣ, ಖಡ್ಗ, ಕಾಳಗ, ಕುದುರೆ ರಾಹುತರು ಇವುಗಳಿಂದಲ್ಲ, ಅವರನ್ನು ಅವರ ದೇವರಾದ ನಾನೇ ಯೆಹೋವ ದೇವರೇ ರಕ್ಷಿಸುವೆನು,” ಎಂದು ಹೇಳಿದರು.</verse>
				<verse number="8">ಗೋಮೆರಳು ಲೋರುಹಾಮಾಳನ್ನು ಎದೆಹಾಲಿನ ಸೇವನೆಯಿಂದ ಬಿಡಿಸಿದ ಮೇಲೆ ಪುನಃ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು.</verse>
				<verse number="9">ಆಗ ಯೆಹೋವ ದೇವರು, “ ‘ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ. ಏಕೆಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವುದಿಲ್ಲ,’ ಎಂದು ಹೇಳಿದರು.</verse>
				<verse number="10">“ಆದರೂ ಇಸ್ರಾಯೇಲ್ ಜನರು ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವರು. ದೇವರು ಯಾವ ಸ್ಥಳದಲ್ಲಿ ಅವರನ್ನು, ‘ನೀವು ನನ್ನ ಜನರಲ್ಲ’ ಎಂದಿದ್ದಾರೋ ಆ ಸ್ಥಳದಲ್ಲಿಯೇ, ‘ನೀವು ಜೀವಸ್ವರೂಪಿಯಾದ ದೇವರ ಮಕ್ಕಳು’ ಎನಿಸಿಕೊಳ್ಳುವ ದಿನ ಬರುವುದು.</verse>
				<verse number="11">ಆಗ ಯೆಹೂದದ ಜನರು ಮತ್ತು ಇಸ್ರಾಯೇಲ್ ಜನರು ಒಟ್ಟುಗೂಡಿಕೊಂಡು ತಮಗೆ ಒಬ್ಬ ನಾಯಕನನ್ನು ನೇಮಕ ಮಾಡಿಕೊಂಡು, ದೇಶದೊಳಗಿಂದ ಹೊರಗೆ ಬರುವರು. ಏಕೆಂದರೆ ಇಜ್ರೆಯೇಲಿನ ಆ ದಿನವು ಮಹಾದಿನವಾಗಿರುವುದು.</verse>
			</chapter>
			<chapter number="2">
				<verse number="1">“ನಿನ್ನ ಸಹೋದರರಿಗೆ, ‘ನನ್ನ ಜನರೇ’ ಎಂದೂ ನಿಮ್ಮ ಸಹೋದರಿಯರಿಗೆ, ‘ನನ್ನ ಪ್ರಿಯರೇ’ ಎಂದೂ ಹೇಳಿರಿ.</verse>
				<verse number="2">“ನಿಮ್ಮ ತಾಯಿಯ ಸಂಗಡ ವಾದಮಾಡಿರಿ, ಅವಳೊಂದಿಗೆ ವಾದಮಾಡಿರಿ, ಏಕೆಂದರೆ ಅವಳು ನನ್ನ ಹೆಂಡತಿಯಲ್ಲ, ಮತ್ತು ನಾನು ಅವಳ ಗಂಡನಲ್ಲ. ಅವಳು ತನ್ನ ವ್ಯಭಿಚಾರದ ನೋಟವನ್ನು ಮತ್ತು ತನ್ನ ಸ್ತನಗಳ ಮಧ್ಯದಿಂದ ಅಪನಂಬಿಗಸ್ತಿಕೆಯನ್ನು ತ್ಯಜಿಸಲಿ.</verse>
				<verse number="3">ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ತೆಗೆದು, ಅವಳು ಹುಟ್ಟಿದ ದಿವಸದಲ್ಲಿದ್ದ ಹಾಗೆ ಅವಳನ್ನು ಬೆತ್ತಲೆ ಮಾಡುತ್ತೇನೆ. ಅವಳನ್ನು ಮರುಭೂಮಿಯಂತೆ ಮಾಡಿ, ಅವಳನ್ನು ಒಣಗಿದ ಭೂಮಿಯಂತೆ ಇಟ್ಟು, ದಾಹದಿಂದ ಅವಳನ್ನು ಕೊಲ್ಲುವೆನು.</verse>
				<verse number="4">ನಾನು ಅವಳ ಮಕ್ಕಳಿಗೂ ಸಹ ಪ್ರೀತಿ ತೋರಿಸುವುದಿಲ್ಲ. ಏಕೆಂದರೆ ಅವರು ವ್ಯಭಿಚಾರದ ಮಕ್ಕಳಾಗಿದ್ದಾರೆ.</verse>
				<verse number="5">ಅವರ ತಾಯಿ ವಿಶ್ವಾಸದ್ರೋಹಿ ಮತ್ತು ಅವಮಾನಕರವಾಗಿ ಅವರನ್ನು ಗರ್ಭಧರಿಸಿದ್ದಾರೆ. ಅವಳು, ‘ನನಗೆ ನನ್ನ ಅನ್ನಪಾನ, ನನ್ನ ಉಣ್ಣೆ ಮತ್ತು ನನ್ನ ನಾರಿನ ಉಡುಗೆ, ನನ್ನ ತೈಲ, ನನ್ನ ಪಾಯಸಪಾನಕಗಳನ್ನು ಕೊಡುವಂಥ ನನ್ನ ಪ್ರೇಮಿಗಳ ಹಿಂದೆ ಹೋಗುವೆನು,’ ಎಂದುಕೊಂಡಿದ್ದಾಳೆ.</verse>
				<verse number="6">ಆದ್ದರಿಂದ ನಾನು ಅವಳ ಮಾರ್ಗಕ್ಕೆ ಮುಳ್ಳುಗಳ ಬೇಲಿಹಾಕಿ ತಡೆಯುವೆನು. ಅವಳು ತನ್ನ ಹಾದಿಗಳನ್ನು ಕಾಣದ ಹಾಗೆ ಅವಳ ಮುಂದೆ ಗೋಡೆಯನ್ನು ಕಟ್ಟುವೆನು.</verse>
				<verse number="7">ಅವಳು ತನ್ನ ಪ್ರೇಮಿಗಳನ್ನು ಹಿಂಬಾಲಿಸಿದರೂ ಅವರನ್ನು ಸಂಧಿಸುವುದಿಲ್ಲ. ಹುಡುಕಿದರೂ ಅವರು ಸಿಕ್ಕುವುದಿಲ್ಲ. ಆಗ ಅವಳು ಹೀಗೆ ಎಂದುಕೊಳ್ಳುವಳು, ‘ನನ್ನ ಮೊದಲನೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು. ಏಕೆಂದರೆ ಆಗ ನನ್ನ ಸ್ಥಿತಿ ಪ್ರಸ್ತುತ ಸ್ಥಿತಿಗಿಂತ ಉತ್ತಮವಾಗಿತ್ತು.’</verse>
				<verse number="8">ಏಕೆಂದರೆ ಅವರು ಬಾಳನಿಗಾಗಿ ಉಪಯೋಗಿಸಿದ ಧಾನ್ಯ, ದ್ರಾಕ್ಷಾರಸ ಹಾಗೂ ಎಣ್ಣೆಯನ್ನು ನಾನೇ ಅವಳಿಗೆ ಕೊಟ್ಟು, ಬೆಳ್ಳಿಬಂಗಾರವನ್ನು ನಾನೇ ಧಾರಾಳವಾಗಿ ಹೆಚ್ಚಿಸಿದೆನೆಂದು ಅವಳು ತಿಳಿಯಲಿಲ್ಲ.</verse>
				<verse number="9">“ಆದ್ದರಿಂದ ನಾನು ತಿರುಗಿಕೊಂಡು, ನನ್ನ ಧಾನ್ಯವನ್ನು ಅದರ ಕಾಲದಲ್ಲಿಯೂ, ನನ್ನ ದ್ರಾಕ್ಷಾರಸವನ್ನು ಅದರ ಸುಗ್ಗಿಯ ಸಮಯದಲ್ಲಿಯೂ ತೆಗೆದ ಹಾಗೆ, ಅವಳ ಬೆತ್ತಲೆತನವನ್ನು ಮುಚ್ಚವುದಕ್ಕಿದ್ದ ನನ್ನ ಉಣ್ಣೆಯನ್ನೂ, ನನ್ನ ನಾರುಬಟ್ಟೆಯನ್ನೂ ತೆಗೆದುಕೊಳ್ಳುವೆನು.</verse>
				<verse number="10">ಈಗ ಅವಳ ತುಚ್ಚತನವನ್ನು, ಅವಳ ಪ್ರೇಮಿಗಳ ಕಣ್ಣುಗಳ ಮುಂದೆ ಬಯಲು ಪಡಿಸುವೆನು. ನನ್ನ ಕೈಯೊಳಗಿಂದ ಅವಳನ್ನು ಯಾರೂ ಬಿಡಿಸರು.</verse>
				<verse number="11">ನಾನು ಅವಳಿಗೆ ಉಲ್ಲಾಸಕರವಾದ ಅವಳ ಹಬ್ಬ, ಅವಳ ಅಮಾವಾಸ್ಯೆ, ಅವಳ ಸಬ್ಬತ್ ದಿನದ ಆಚರಣೆ, ಅವಳ ಸಭಾ ಸಮಾರಂಭ ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.</verse>
				<verse number="12">ತನ್ನ ಮಿಂಡರಿಂದಾದ ಪ್ರತಿಫಲ ಇವುಗಳೇ ಎಂದು, ಅವಳು ಹೇಳಿದ ಅವಳ ದ್ರಾಕ್ಷಿಬಳ್ಳಿಗಳನ್ನು, ಅವಳ ಅಂಜೂರದ ಮರಗಳನ್ನು ನಾನು ಹಾಳು ಮಾಡಿ, ಅವುಗಳನ್ನು ನಾನು ಕಾಡನ್ನಾಗಿ ಮಾಡುವೆನು. ಕಾಡುಮೃಗಗಳು ಅವುಗಳನ್ನು ನುಂಗುವವು.</verse>
				<verse number="13">ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಅವಳ ಪ್ರೇಮಿಗಳ ಹಿಂದೆ ಹೋಗಿ, ಬಾಳ್ ದೇವತೆಗಳಿಗೆ ಧೂಪ ಸುಟ್ಟ ದಿವಸಗಳಿಗಾಗಿ ನಾನು ಅವಳನ್ನು ದಂಡಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="14">ಆದ್ದರಿಂದ ನಾನು ಅವಳನ್ನು ಮೋಹಿಸಿ, ಅವಳನ್ನು ಮರುಭೂಮಿಯೊಳಗೆ ಕರೆದುಕೊಂಡು ಬಂದು, ಅವಳ ಸಂಗಡ ಹಿತಕರವಾಗಿ ಮಾತನಾಡುವೆನು.</verse>
				<verse number="15">ಅವಳ ದ್ರಾಕ್ಷಿತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ಕಣಿವೆಯನ್ನೇ, ಅವಳ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು. ಅಲ್ಲಿ ಅವಳು ತಾನು ಯೌವನದ ದಿವಸಗಳಲ್ಲಿಯೂ, ಈಜಿಪ್ಟ್ ದೇಶದೊಳಗಿಂದ ಹೊರಟು ಬಂದ ದಿವಸಗಳಲ್ಲಿಯೂ ಆದ ಹಾಗೆ ಆಡುವಳು.</verse>
				<verse number="16">ಯೆಹೋವ ದೇವರು ಹೀಗೆನ್ನುತ್ತಾರೆ, “ಆ ದಿವಸದಲ್ಲಿ,” “ನೀನು ನನ್ನನ್ನು ಇನ್ನು ಮೇಲೆ, ‘ನನ್ನ ಒಡೆಯ’ ಎಂದು ಕರೆಯದೆ, ‘ನನ್ನ ಪತಿ’ ಎಂದು ಕರೆಯುವೆ.</verse>
				<verse number="17">ನಾನು ಬಾಳ್ ದೇವತೆಗಳ ಹೆಸರುಗಳನ್ನು ಅವಳ ಬಾಯಿಯಿಂದ ತೆಗೆದುಹಾಕುವೆನು. ಇನ್ನು ಮುಂದೆ ಅವರ ಹೆಸರನ್ನು ಕರೆಯಲಾಗುವುದಿಲ್ಲ.</verse>
				<verse number="18">ಆ ದಿವಸದಲ್ಲಿ, ಅವರಿಗೋಸ್ಕರ ಅಡವಿಯ ಮೃಗಗಳ, ಆಕಾಶದ ಪಕ್ಷಿಗಳ ಮತ್ತು ಭೂಮಿಯ ಕ್ರಿಮಿಗಳ ಸಂಗಡ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ, ಖಡ್ಗವನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದುಹಾಕಿ, ಅವರೆಲ್ಲರೂ ಸುರಕ್ಷಿತರಾಗಿ ಮಲಗುವಂತೆ ಮಾಡುವೆನು.</verse>
				<verse number="19">ನಿನ್ನನ್ನು ನನಗೆ ಸದಾಕಾಲಕ್ಕೆ ನಿಶ್ಚಿತಾರ್ಥ ಮಾಡಿಕೊಳ್ಳುವೆನು. ನೀತಿಯಿಂದಲೂ, ನ್ಯಾಯದಿಂದಲೂ, ಪ್ರೀತಿಯಿಂದಲೂ, ಅನುಕಂಪದಿಂದಲೂ, ನಿನ್ನನ್ನು ನನಗೆ ನಿಶ್ಚಿತಾರ್ಥ ಮಾಡಿಕೊಳ್ಳುವೆನು.</verse>
				<verse number="20">ನಾನು ನಿನ್ನನ್ನು ನಂಬಿಗಸ್ತಿಕೆಯಿಂದಲೇ ನಿಶ್ಚಿತಾರ್ಥ ಮಾಡಿಕೊಳ್ಳುವೆನು. ಆಗ ನೀನು ಯೆಹೋವ ದೇವರನ್ನು ತಿಳಿದುಕೊಳ್ಳುವೆ.</verse>
				<verse number="21">“ಆ ದಿವಸಗಳಲ್ಲಿ, ನಾನು ಕೇಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ನಾನು ಆಕಾಶಗಳನ್ನು ಕೇಳುವೆನು. ಅವು ಭೂಮಿಯನ್ನು ಕೇಳುವುವು.</verse>
				<verse number="22">ಭೂಮಿಯು ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಕೇಳುವುವು. ಅವು ಇಜ್ರೆಯೇಲಿಗೆ ಒಲಿಯುವುವು.</verse>
				<verse number="23">ನಾನು ದೇಶದಲ್ಲಿ ಆಕೆಯನ್ನು ನನಗಾಗಿ ಬಿತ್ತಿಕೊಳ್ಳುವೆನು. ‘ನನ್ನ ಪ್ರಿಯರಲ್ಲ’ ಎಂದು ಕರೆದವರಿಗೆ, ನಾನು ನನ್ನ ಪ್ರೀತಿಯನ್ನು ತೋರಿಸುವೆನು. ನಾನು, ‘ನೀವು ನನ್ನ ಜನರಲ್ಲ’ ಎಂದು ಹೇಳಿದವರನ್ನು, ‘ನೀವು ನನ್ನ ಜನರು,’ ಎಂದು ಹೇಳುವೆನು. ಅವರು, ‘ನೀವು ನಮ್ಮ ದೇವರು’ ” ಎಂದು ಹೇಳುವರು.</verse>
			</chapter>
			<chapter number="3">
				<verse number="1">ತರುವಾಯ ಯೆಹೋವ ದೇವರು ನನಗೆ, “ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು, ದ್ರಾಕ್ಷಿ ಉಂಡೆಗಳನ್ನು ಪ್ರೀತಿಸುವ ಇಸ್ರಾಯೇಲರನ್ನು ಯೆಹೋವ ದೇವರು ಪ್ರೀತಿಸುವ ಪ್ರಕಾರ, ನೀನು ಹೋಗಿ ನಿನ್ನ ಹೆಂಡತಿ ವ್ಯಭಿಚಾರಿಣಿಯಾಗಿದ್ದರೂ ಆಕೆಯನ್ನು ಪುನಃ ಪ್ರೀತಿಸು,” ಎಂದು ಹೇಳಿದನು.</verse>
				<verse number="2">ಅಂತೆಯೇ ನಾನು ಅವಳನ್ನು ನನಗಾಗಿ ಹದಿನೈದು ಶೆಕೆಲ್ ಬೆಳ್ಳಿ ಮತ್ತು ಸುಮಾರು ಒಂದು ಹೋಮೆರ್ ಹಾಗೂ ಒಂದು ಲೆಥೆಕ ಜವೆಗೋಧಿಗೂ ಕೊಂಡುಕೊಂಡೆನು.</verse>
				<verse number="3">ನಾನು ಅವಳಿಗೆ, “ನನ್ನೊಂದಿಗೆ ಬಹಳ ದಿವಸಗಳು ನನಗಾಗಿ ಇರಬೇಕು. ನೀನು ವ್ಯಭಿಚಾರವನ್ನು ಮಾಡಬಾರದು. ನೀನು ಬೇರೆ ಪುರುಷನಿಗಾಗಿ ಇರಬಾರದು. ಆಗ ನಿನ್ನೊಂದಿಗೆ ಇರುವೆನು,” ಎಂದು ಹೇಳಿದೆನು.</verse>
				<verse number="4">ಇಸ್ರಾಯೇಲರು ಬಹಳ ದಿವಸಗಳವರೆಗೆ ಅರಸನಿಲ್ಲದೆ, ರಾಜಕುಮಾರನಿಲ್ಲದೆ, ಬಲಿ ಇಲ್ಲದೆ, ಪವಿತ್ರ ಕಲ್ಲುಗಳಿಲ್ಲದೆ, ಏಫೋದ್ ಇಲ್ಲದೆ ಮತ್ತು ವಿಗ್ರಹಗಳು ಇಲ್ಲದೆ ಇರುವರು.</verse>
				<verse number="5">ಆಮೇಲೆ ಇಸ್ರಾಯೇಲರು ತಿರುಗಿಕೊಂಡು ಅವರ ದೇವರಾದ ಯೆಹೋವ ದೇವರನ್ನು ಮತ್ತು ಅವರ ಅರಸನಾದ ದಾವೀದನನ್ನು ಹುಡುಕಿಕೊಂಡು, ಅಂತ್ಯ ದಿವಸಗಳಲ್ಲಿ ಯೆಹೋವ ದೇವರನ್ನೂ, ಆತನ ಒಳ್ಳೆಯತನವನ್ನೂ ಭಯಭಕ್ತಿಯಿಂದ ಪಡೆಯುವರು.</verse>
			</chapter>
			<chapter number="4">
				<verse number="1">ಇಸ್ರಾಯೇಲರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ: ದೇಶದ ನಿವಾಸಿಗಳಾದ ನಿಮ್ಮ ಮೇಲೆ ಯೆಹೋವ ದೇವರು ಆಪಾದನೆ ಹೊರಿಸಿದ್ದಾರೆ. “ಏಕೆಂದರೆ ದೇಶದಲ್ಲಿ ಸತ್ಯವೂ ಇಲ್ಲ, ದಯೆಯೂ ಇಲ್ಲ, ದೇವರ ತಿಳುವಳಿಕೆಯೂ ಇಲ್ಲ.</verse>
				<verse number="2">ಶಪಿಸುವದೂ, ಸುಳ್ಳು ಹೇಳುವುದೂ, ಕೊಲ್ಲುವುದು, ಕದಿಯುವುದೂ, ವ್ಯಭಿಚಾರ ಮಾಡುವುದೂ ಹೆಚ್ಚಾಗಿ ಬಿಟ್ಟಿವೆ. ಅವರು ಎಲ್ಲಾ ಮಿತಿಗಳನ್ನು ಮೀರಿದ್ದಾರೆ. ದೇಶವೆಲ್ಲಾ ರಕ್ತಮಯವಾಗಿದೆ.</verse>
				<verse number="3">ಆದ್ದರಿಂದ ದೇಶವು ದುಃಖಪಡುತ್ತಿದೆ. ಅದರಲ್ಲಿ ವಾಸಿಸುವ ಪ್ರತಿಯೊಬ್ಬನು ಕುಗ್ಗಿಹೋಗಿದ್ದಾನೆ. ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ, ಸಮುದ್ರ ಮೀನುಗಳು ನಶಿಸಿ ಹೋಗುತ್ತಿವೆ.</verse>
				<verse number="4">“ಆದರೂ ಯಾವನಾದರೂ ವಾದಿಸದಿರಲಿ ಇಲ್ಲವೆ ಬೇರೆಯವರನ್ನು ಖಂಡಿಸದಿರಲಿ. ಏಕೆಂದರೆ ನಿಮ್ಮ ಜನರೆಲ್ಲರೂ ಯಾಜಕನೊಂದಿಗೆ ವಾದಿಸುವವರಾಗಿದ್ದಾರೆ.</verse>
				<verse number="5">ನೀನು ಹಗಲಿನಲ್ಲಿಯೂ, ರಾತ್ರಿಯಲ್ಲಿಯೂ ಬೀಳುವೆ. ಪ್ರವಾದಿಗಳು ನಿನ್ನ ಸಂಗಡ ಮುಗ್ಗರಿಸಿಬೀಳುವರು. ಆದ್ದರಿಂದ ನಾನು ನಿನ್ನ ತಾಯಿಯನ್ನು ನಾಶಮಾಡುವೆನು.</verse>
				<verse number="6">ನನ್ನ ಜನರು ಜ್ಞಾನಹೀನರಾಗಿ ಅಳಿದು ಹೋಗುತ್ತಿದ್ದಾರೆ. “ಏಕೆಂದರೆ ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ. ನಾನು ಸಹ ಯಾಜಕ ವರ್ಗದಿಂದ ನಿಮ್ಮನ್ನು ವರ್ಜಿಸಿ ಬಿಡುತ್ತೇನೆ. ಏಕೆಂದರೆ ನೀವು ದೇವರ ನಿಯಮವನ್ನು ಮರೆತುಬಿಟ್ಟಿದ್ದೀರಿ, ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.</verse>
				<verse number="7">ಯಾಜಕರು ಹೆಚ್ಚಿದ ಹಾಗೆಲ್ಲಾ ಅವರು ನನಗೆ ವಿರೋಧವಾಗಿ ಪಾಪಮಾಡಿದ್ದಾರೆ. ಆದ್ದರಿಂದ ನಾನು ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುವೆನು.</verse>
				<verse number="8">ಅವರು ನನ್ನ ಜನರ ಪಾಪವನ್ನು ತಿನ್ನುತ್ತಾರೆ. ಅವರು ದುಷ್ಟತನದ ಮೇಲೆ ಅವರ ಮನಸ್ಸನ್ನು ಇಡುತ್ತಾರೆ.</verse>
				<verse number="9">ಯಾಜಕನು ಹೇಗೋ ಹಾಗೆಯೇ ಜನರು ಇರುವರು. ನಾನು ಅವರ ಮಾರ್ಗಗಳಿಗೋಸ್ಕರ ಅವರನ್ನು ಶಿಕ್ಷಿಸಿ, ಅವರ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲ ಕೊಡುವೆನು.</verse>
				<verse number="10">“ಏಕೆಂದರೆ ಅವರು ತಿಂದರೂ ಸಾಕಾಗುವುದಿಲ್ಲ. ಅವರು ವ್ಯಭಿಚಾರ ಮಾಡಿದರೂ ಅಭಿವೃದ್ಧಿ ಆಗುವುದಿಲ್ಲ. ಏಕೆಂದರೆ ಅವರು ಯೆಹೋವ ದೇವರನ್ನೇ ಬಿಟ್ಟುಬಿಟ್ಟಿದ್ದಾರೆ.</verse>
				<verse number="11">ಮದ್ಯಪಾನ, ದ್ರಾಕ್ಷಾರಸ ಇವು ಜನರನ್ನು ಜ್ಞಾನಹೀನರನ್ನಾಗಿ ಮಾಡುತ್ತವೆ.</verse>
				<verse number="12">ನನ್ನ ಜನರು ಮರದ ತುಂಡುಗಳಿಂದ ಕಣಿ ಕೇಳುತ್ತಾರೆ. ಹಿಡಿದ ಕೋಲಿನಿಂದ ಉತ್ತರ ಪಡೆಯಲು ಯತ್ನಿಸುತ್ತಾರೆ. ಏಕೆಂದರೆ ವ್ಯಭಿಚಾರದ ಆತ್ಮವು ಅವರನ್ನು ತಪ್ಪಿಸಿಬಿಟ್ಟಿದೆ. ಅವರು ತಮ್ಮ ದೇವರಿಗೆ ಅಪನಂಬಿಗಸ್ತರಾಗಿ ದ್ರೋಹ ಮಾಡಿದ್ದಾರೆ.</verse>
				<verse number="13">ಅವರು ಬೆಟ್ಟಗಳ ತುದಿಯಲ್ಲಿ ಬಲಿಗಳನ್ನು ಅರ್ಪಿಸುತ್ತಾರೆ. ಗುಡ್ಡಗಳ ಮೇಲೆ ಏಲಾ, ಲಿಬ್ನೆ, ಏಲಾ ಮರಗಳ ಕೆಳಗೆ ಅವುಗಳ ನೆರಳು ದಟ್ಟವಾಗಿರುವುದರಿಂದ ಧೂಪವನ್ನು ಸುಡುತ್ತಾರೆ. ಆದ್ದರಿಂದ ನಿಮ್ಮ ಪುತ್ರಿಯರು ವ್ಯಭಿಚಾರ ಮಾಡುವರು. ನಿಮ್ಮ ಸೊಸೆಯಂದಿರು ವ್ಯಭಿಚಾರಿಣಿಗಳಾಗುವರು.</verse>
				<verse number="14">“ನಿಮ್ಮ ಪುತ್ರಿಯರು ವ್ಯಭಿಚಾರ ಮಾಡುವಾಗಲೂ, ನಿಮ್ಮ ಸೊಸೆಯಂದಿರು ವ್ಯಭಿಚಾರ ಮಾಡುವಾಗಲೂ ನಾನು ಅವರನ್ನು ಶಿಕ್ಷಿಸುವುದಿಲ್ಲ. ಏಕೆಂದರೆ ಪುರುಷರು ಸ್ವತಃ ವೇಶ್ಯೆಯರೊಂದಿಗೆ ವಾಸಿಸುತ್ತಾರೆ ಮತ್ತು ದೇವಾಲಯದ ವೇಶ್ಯೆಯರೊಂದಿಗೆ ಬಲಿ ಅರ್ಪಿಸುತ್ತಾರೆ. ಆದ್ದರಿಂದ ವಿವೇಕವಿಲ್ಲದ ಜನರು ನಾಶವಾಗುತ್ತಾರೆ.</verse>
				<verse number="15">“ಇಸ್ರಾಯೇಲೇ, ನೀನು ವ್ಯಭಿಚಾರ ಮಾಡಿದರೂ, ಯೆಹೂದವು ಆ ದೋಷಕ್ಕೆ ಒಳಗಾಗದಿರಲಿ. “ಗಿಲ್ಗಾಲಿಗೆ ಹೋಗದೆ, ಇಲ್ಲವೆ ಬೇತಾವೆನಿಗೆ ಏರದೇ, ‘ಯೆಹೋವ ದೇವರ ಜೀವದಾಣೆ,’ ಎಂದು ಪ್ರಮಾಣ ಮಾಡದೆ ಇರಲಿ.</verse>
				<verse number="16">ಹಠಮಾರಿ ಹಸುವಿನ ಹಾಗೆ ಇಸ್ರಾಯೇಲು ಹಟಮಾರಿಯಾಗಿದೆ. ಈಗ ಯೆಹೋವ ದೇವರು ಹುಲ್ಲುಗಾವಲಲ್ಲಿರುವ ಕುರಿಮರಿಯ ಹಾಗೆ ಅವರನ್ನು ಹೇಗೆ ಮೇಯಿಸುವರು?</verse>
				<verse number="17">ಎಫ್ರಾಯೀಮನು ವಿಗ್ರಹಗಳಿಗೆ ಸೇರಿಕೊಂಡಿದ್ದಾನೆ. ಅವನನ್ನು ಅವನಷ್ಟಕ್ಕೆ ಬಿಟ್ಟುಬಿಡು.</verse>
				<verse number="18">ಅವರು ಮಿತಿಮೀರಿ ಕುಡಿಯುತ್ತಾರೆ. ಅವರು ಯಾವಾಗಲೂ ವ್ಯಭಿಚಾರ ಮಾಡುವವರಾಗಿದ್ದಾರೆ. ಅವರನ್ನು ಆಳುವವರು ಅವಮಾನ ಕಾರ್ಯಗಳಲ್ಲಿ ಇಷ್ಟಪಡುತ್ತಾರೆ.</verse>
				<verse number="19">ಗಾಳಿಯು ಅವರನ್ನು ತನ್ನ ರೆಕ್ಕೆಗಳಿಂದ ಬಂಧಿಸಿದೆ. ಅವರು ತಮ್ಮ ಬಲಿಗಳಿಂದ ನಾಚಿಕೆಪಡುವರು.</verse>
			</chapter>
			<chapter number="5">
				<verse number="1">“ಯಾಜಕರೇ, ಇದನ್ನು ನೀವು ಕೇಳಿರಿ; ಇಸ್ರಾಯೇಲಿನ ಮನೆತನದವರೇ ಕೇಳಿಸಿಕೊಳ್ಳಿರಿ; ಅರಸನ ಮನೆಯವರೇ ಕಿವಿಗೊಡಿರಿ. ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನ ಮೇಲೆ ಒಡ್ಡಿದ ಬಲೆಯಾಗಿಯೂ ಇದ್ದ ಕಾರಣ ನಿಮಗೆ ವಿರುದ್ಧವಾಗಿ ಈ ನ್ಯಾಯತೀರ್ಪು ಬಂದಿದೆ.</verse>
				<verse number="2">ನನಗೆ ತಿರುಗಿಬಿದ್ದವರು ಅಗಾಧವಾದ ಕೊಲೆಯನ್ನು ಮಾಡುವುದರಲ್ಲಿ ಮಗ್ನರಾಗಿದ್ದರೆ. ಆದರೂ ನಾನು ಅವರೆಲ್ಲರನ್ನು ಶಿಕ್ಷಿಸುವವನಾಗಿದ್ದೇನೆ.</verse>
				<verse number="3">ನಾನು ಎಫ್ರಾಯೀಮನ್ನು ಬಲ್ಲೆನು, ಇಸ್ರಾಯೇಲು ನನಗೆ ಮರೆಯಾದದ್ದಲ್ಲ. ಏಕೆಂದರೆ ಎಫ್ರಾಯೀಮೇ, ನೀನು ಈಗಲೇ ವ್ಯಭಿಚಾರ ಮಾಡಲು ತಿರುಗಿಕೊಂಡಿದ್ದೀ. ಇಸ್ರಾಯೇಲು ಸಹ ಅಪವಿತ್ರವಾಯಿತು.</verse>
				<verse number="4">“ಅವರು ತಮ್ಮ ದೇವರ ಬಳಿಗೆ ತಿರುಗಿಕೊಳ್ಳದಂತೆ, ಅವರ ದುಷ್ಕೃತ್ಯಗಳು ಅವರಿಗೆ ಅಡ್ಡಿಯಾಗಿವೆ. ವ್ಯಭಿಚಾರದ ಆತ್ಮವು ಅವರ ಹೃದಯದಲ್ಲಿದೆ. ಅವರು ಯೆಹೋವ ದೇವರನ್ನು ಸ್ವೀಕರಿಸಿಕೊಳ್ಳುವುದಿಲ್ಲ.</verse>
				<verse number="5">ಇಸ್ರಾಯೇಲಿನ ಗರ್ವವು ಅವರ ಮುಖದ ಮುಂದೆ ಸಾಕ್ಷಿಕೊಡುತ್ತದೆ. ಇಸ್ರಾಯೇಲು ಮತ್ತು ಎಫ್ರಾಯೀಮು ತಮ್ಮ ಪಾಪದಲ್ಲಿ ಎಡವಿ ಬೀಳುವವು. ಯೆಹೂದವು ಸಹ ಅವರೊಂದಿಗೆ ಬೀಳುವುದು.</verse>
				<verse number="6">ಅವರು ಯೆಹೋವ ದೇವರನ್ನು ಹುಡುಕುವುದಕ್ಕೆ ತಮ್ಮ ದನಕುರಿಗಳೊಂದಿಗೂ ಹೋಗುವರು. ಆದರೆ ಆತನು ಅವರಿಂದ ತನ್ನನ್ನು ಹಿಂದೆಗೆದುಕೊಂಡಿದ್ದರಿಂದ, ಅವರು ಆತನನ್ನು ಕಾಣುವುದೇ ಇಲ್ಲ.</verse>
				<verse number="7">ಅವರು ಯೆಹೋವ ದೇವರಿಗೆ ಅಪನಂಬಿಗಸ್ತರಾಗಿದ್ದಾರೆ. ಅವರು ವ್ಯಭಿಚಾರದ ಮಕ್ಕಳನ್ನು ಪಡೆದಿದ್ದಾರೆ. ಅವರು ತಮ್ಮ ಅಮಾವಾಸ್ಯೆ ಹಬ್ಬಗಳನ್ನು ಆಚರಿಸಿದಾಗ, ಅವರ ಹೊಲಗಳು ನುಂಗಿಬಿಡಲಾಗುವವು.</verse>
				<verse number="8">“ಗಿಬೆಯದಲ್ಲಿ ತುತೂರಿಯನ್ನೂ ರಾಮದಲ್ಲಿ ಕೊಂಬನ್ನೂ ಊದಿರಿ. ಬೆನ್ಯಾಮೀನೇ, ನಿನ್ನ ಹಿಂದೆ ನೋಡು! ಬೇತಾವೆನಿನಲ್ಲಿ ಗಟ್ಟಿಯಾಗಿ ಕೂಗು.</verse>
				<verse number="9">ಎಫ್ರಾಯೀಮು ಗದರಿಸುವ ದಿವಸದಲ್ಲೇ ಹಾಳಾಗುವುದು. ಇಸ್ರಾಯೇಲಿನ ಗೋತ್ರಗಳಲ್ಲಿ ನಾನು ನಿಶ್ಚಯವಾಗಿ ಆಗುವಂಥದ್ದನ್ನೇ ತಿಳಿಸಿದ್ದೇನೆ.</verse>
				<verse number="10">ಯೆಹೂದದ ನಾಯಕರು ಮೇರೆಗಳನ್ನು ಸರಿಸುವವರ ಹಾಗೆ ಇದ್ದರು. ಅವರ ಮೇಲೆ, ನೀರಿನ ಪ್ರವಾಹದಂತೆ ನನ್ನ ಕೋಪವನ್ನು ಸುರಿಸುವೆನು.</verse>
				<verse number="11">ಎಫ್ರಾಯೀಮು, ವಿಗ್ರಹಗಳನ್ನು ಅನುಸರಿಸಲು ಮನಸ್ಸು ಮಾಡಿದ ಕಾರಣ, ಅವನು ನ್ಯಾಯತೀರ್ಪಿಗೆ ಗುರಿಯಾಗಿ, ಹಿಂಸೆಗೆ ಒಳಗಾದನು.</verse>
				<verse number="12">ನಾನು ಎಫ್ರಾಯೀಮಿಗೆ ನುಸಿಯ ಹಾಗೆಯೂ, ಯೆಹೂದದ ಮನೆತನದವರಿಗೆ ಕೊಳೆಯುವಿಕೆಯ ಹಾಗೆಯೂ ಇರುವೆನು.</verse>
				<verse number="13">“ಎಫ್ರಾಯೀಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ, ಎಫ್ರಾಯೀಮ್ ಅಸ್ಸೀರಿಯಕ್ಕೆ ತಿರುಗಿ, ಸಹಾಯಕ್ಕಾಗಿ ಮಹಾ ಅರಸನ ಬಳಿಗೆ ಕಳುಹಿಸಿತು. ಆದರೆ ನಿಮ್ಮನ್ನು ಗುಣಪಡಿಸಲು ಅವನು ಶಕ್ತನಲ್ಲ. ನಿಮ್ಮ ಗಾಯವನ್ನು ಗುಣಪಡಿಸಲಾರನು.</verse>
				<verse number="14">ಏಕೆಂದರೆ ನಾನು ಎಫ್ರಾಯೀಮಿಗೆ ಸಿಂಹದ ಹಾಗೆಯೂ, ಯೆಹೂದದ ಮನೆತನದವರಿಗೆ ಪ್ರಾಯದ ಸಿಂಹದ ಹಾಗೆಯೂ ಇರುವೆನು. ನಾನೇ ಅವರನ್ನು ಸೀಳಿಬಿಟ್ಟು ಹೋಗುವೆನು. ನಾನು ಎತ್ತಿಕೊಂಡು ಹೋಗಲು, ಅವರನ್ನು ಯಾರೂ ಬಿಡಿಸಲಾರರು.</verse>
				<verse number="15">ಅಪರಾಧಗಳನ್ನು ಅರಿಕೆಮಾಡಿ, ನನ್ನ ಮುಖವನ್ನು ಹುಡುಕುವವರೆಗೂ, ನಾನು ತಿರುಗಿಕೊಂಡು ನನ್ನ ಗುಹೆಗೆ ಹೋಗುವೆನು. ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.”</verse>
			</chapter>
			<chapter number="6">
				<verse number="1">ಬನ್ನಿರಿ, ನಾವು ಯೆಹೋವ ದೇವರ ಕಡೆಗೆ ತಿರುಗಿಕೊಳ್ಳೋಣ. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ, ಅವರೇ ನಮ್ಮನ್ನು ಸ್ವಸ್ಥ ಮಾಡುವರು. ಅವರು ಹೊಡೆದಿದ್ದಾನೆ, ಅವರೇ ನಮ್ಮನ್ನು ಕಟ್ಟುವರು.</verse>
				<verse number="2">ಅವರು ಎರಡು ದಿವಸಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು. ಮೂರನೆಯ ದಿವಸದಲ್ಲಿ ಆತನೇ ನಮ್ಮನ್ನು ಪುನಃಸ್ಥಾಪಿಸುವರು. ನಾವು ಅವರ ದೃಷ್ಟಿಯಲ್ಲಿ ಜೀವಿಸುವೆವು.</verse>
				<verse number="3">ನಾವು ಯೆಹೋವ ದೇವರನ್ನು ತಿಳಿದುಕೊಳ್ಳಲು, ಅವರನ್ನು ಹಿಂಬಾಲಿಸಿದರೆ ತಿಳಿದುಕೊಳ್ಳುವೆವು. ಅವರ ಆಗಮನವು ಅರುಣೋದಯದಂತೆ ನಿಶ್ಚಯ. ಅವರು ಮಳೆಯಂತೆಯೂ ಮುಂಗಾರಿನಂತೆಯೂ, ಭೂಮಿಯನ್ನು ತಂಪು ಮಾಡುವ ಹಿಂಗಾರಿನಂತೆಯೂ ಬಳಿಗೆ ಬರುವರು.</verse>
				<verse number="4">ಎಫ್ರಾಯೀಮೇ, ನಿನಗೆ ನಾನು ಏನು ಮಾಡಲಿ? ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಪ್ರೀತಿಯು ಹೊತ್ತಾರೆಯ ಮೇಘದ ಹಾಗೆಯೂ, ಮುಂಜಾನೆಯ ಮಂಜಿನ ಹಾಗೆಯೂ ಹೋಗಿಬಿಡುತ್ತದೆ.</verse>
				<verse number="5">ಆದ್ದರಿಂದ ನಾನು ನಿಮ್ಮ ಜನರನ್ನು ಪ್ರವಾದಿಗಳ ಮುಖಾಂತರ ಕಡಿದುಬಿಟ್ಟು, ನನ್ನ ಬಾಯಿಮಾತುಗಳಿಂದ ಅವರನ್ನು ಸಂಹರಿಸಿದ್ದೇನೆ. ನನ್ನ ನ್ಯಾಯತೀರ್ಪುಗಳು ಸೂರ್ಯನ ಹಾಗೆ ಹೊರಟವು.</verse>
				<verse number="6">ಏಕೆಂದರೆ ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ. ದಹನಬಲಿಗಳಿಗಿಂತ ದೇವರ ಅಂಗೀಕಾರವನ್ನೇ ಅಪೇಕ್ಷಿಸುತ್ತೇನೆ.</verse>
				<verse number="7">ಅವರು ಆದಾಮನಂತೆ ಒಡಂಬಡಿಕೆಯನ್ನು ಮೀರಿದ್ದಾರೆ. ಅಲ್ಲಿ ಅವರು ನನಗೆ ವಿರುದ್ಧವಾಗಿ ಅಪನಂಬಿಗಸ್ತಿಕೆಯಿಂದ ನಡೆದುಕೊಂಡಿದ್ದಾರೆ.</verse>
				<verse number="8">ಗಿಲ್ಯಾದ್ ಕೆಟ್ಟ ಕೆಲಸ ಮಾಡುವವರ ಮತ್ತು ರಕ್ತದಿಂದ ಅಪವಿತ್ರಮಾಡಿದ ಪಟ್ಟಣವಾಗಿದೆ.</verse>
				<verse number="9">ದರೋಡೆಕೋರರು ಮನುಷ್ಯನಿಗೋಸ್ಕರ ಹೊಂಚುಹಾಕುವಂತೆ, ಯಾಜಕರ ಗುಂಪು ದಾರಿಹೋಕರಿಗಾಗಿ ಹೊಂಚುಹಾಕುತ್ತಾ ಶೆಕೆಮಿಗೆ ಹೋಗುವವರನ್ನು ದಾರಿಯಲ್ಲಿ ಕೊಲೆಮಾಡುತ್ತಾರೆ. ಅವರು ನೀಚತನವನ್ನು ಮಾಡುವವರಾಗಿದ್ದಾರೆ.</verse>
				<verse number="10">ಇಸ್ರಾಯೇಲಿನ ಮನೆತನದವರಲ್ಲಿ ಅತಿ ಭಯಂಕರವಾದ ಸಂಗತಿಯನ್ನು ನೋಡಿದೆನು. ಅಲ್ಲಿ ಎಫ್ರಾಯೀಮಿನ ವ್ಯಭಿಚಾರವು ನಡೆಯುತ್ತದೆ, ಇಸ್ರಾಯೇಲು ಅಪವಿತ್ರವಾಗಿದೆ.</verse>
				<verse number="11">“ಯೆಹೂದವೇ, ನಿನಗೂ ಸಹ, ತಕ್ಕ ಸುಗ್ಗಿಯು ನೇಮಕವಾಗಿದೆ. “ಸೆರೆಯಾದ ನನ್ನ ಜನರಿಗೆ, ಪುನಃಸ್ಥಾಪನೆಯಾಗುವುದು.</verse>
			</chapter>
			<chapter number="7">
				<verse number="1">ನಾನು ಇಸ್ರಾಯೇಲನ್ನು ಗುಣ ಮಾಡಬೇಕೆಂದಿರುವಾಗ ಎಫ್ರಾಯೀಮಿನ ಪಾಪಗಳನ್ನು ಬಹಿರಂಗಪಡಿಸುತ್ತೇನೆ. ಮತ್ತು ಸಮಾರ್ಯದ ಕೆಟ್ಟತನವನ್ನು ಪ್ರಕಟಪಡಿಸುತ್ತೇನೆ. ಅವರು ಸುಳ್ಳನ್ನು ನಡೆಸುತ್ತಾರೆ. ಕಳ್ಳನು ಒಳಗೆ ಬರುತ್ತಾನೆ ಮತ್ತು ಕಳ್ಳರ ಗುಂಪು ಹೊರಗೆ ಸುಲಿದುಕೊಳ್ಳುತ್ತದೆ.</verse>
				<verse number="2">ಆದರೆ ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕ ಮಾಡುತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನೆಸಿಕೊಳ್ಳುವುದಿಲ್ಲ. ಈಗ ಅವರ ಪಾಪಗಳು ಅವರನ್ನು ಸುತ್ತಿಕೊಂಡಿವೆ. ಅವು ನನ್ನ ಮುಖದ ಮುಂದೆ ಇವೆ.</verse>
				<verse number="3">“ಅವರು ತಮ್ಮ ಕೆಟ್ಟತನದಿಂದ ಅರಸನನ್ನೂ, ಅವರ ಸುಳ್ಳಿನಿಂದ ರಾಜಕುಮಾರನನ್ನೂ ಸಂತೋಷ ಪಡಿಸುತ್ತಾರೆ.</verse>
				<verse number="4">ಅವರೆಲ್ಲರು ವ್ಯಭಿಚಾರಿಗಳು, ರೊಟ್ಟಿಸುಡುವವನು ಬೆಂಕಿಹೊತ್ತಿಸಿ, ಉರಿಸುವ ಒಲೆಗೆ ಸಮಾನರಾಗಿದ್ದಾರೆ. ಅವನು ಹಿಟ್ಟು ನಾದಿದ ಮೇಲೆ, ಅದು ಹುಳಿಯಾಗುವ ತನಕ ಉರಿಸದೆ ಬಿಟ್ಟಿರುವ ಕೆಂಡಕ್ಕೆ ಸಮಾನರಾಗಿದ್ದಾರೆ.</verse>
				<verse number="5">ನಮ್ಮ ಅರಸನ ಹಬ್ಬದ ದಿವಸಗಳಲ್ಲಿ ರಾಜಕುಮಾರರು ದ್ರಾಕ್ಷಾರಸವನ್ನು ಕುಡಿದು ಮತ್ತರಾಗುತ್ತಾರೆ. ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.</verse>
				<verse number="6">ಅವರು ಹೊಂಚುಹಾಕಿಕೊಂಡಿದ್ದಾಗ, ತಮ್ಮ ಹೃದಯವನ್ನು ಅವರು ಒಲೆಯ ಹಾಗೆ ಸಿದ್ಧಮಾಡಿದ್ದಾರೆ. ಅವರ ರೋಷಾಗ್ನಿಯು ರಾತ್ರಿಯೆಲ್ಲಾ ಹೊತ್ತಿಕೊಂಡೇ ಇರುತ್ತದೆ ಬೆಳಿಗ್ಗೆ ಅದು ಪ್ರಜ್ವಲಿಸುವ ಬೆಂಕಿಯ ಹಾಗೆ ಉರಿಯುತ್ತದೆ.</verse>
				<verse number="7">ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ. ಅವರು ತಮ್ಮ ನ್ಯಾಯಾಧಿಪತಿಗಳನ್ನು ನುಂಗಿಬಿಡುತ್ತಾರೆ. ಅವರ ಅರಸರೆಲ್ಲರು ಬಿದ್ದು ಹೋಗಿದ್ದಾರೆ. ಅವರಲ್ಲಿ ಒಬ್ಬನಾದರೂ ನನ್ನನ್ನು ಕರೆಯುವುದಿಲ್ಲ.</verse>
				<verse number="8">“ಎಫ್ರಾಯೀಮು ಜನಾಂಗಗಳೊಂದಿಗೆ ತನ್ನನ್ನು ಬೆರೆಸಿಕೊಂಡಿದೆ. ಎಫ್ರಾಯೀಮು ತಿರುವಿ ಹಾಕದ ರೊಟ್ಟಿಯಾಗಿದ್ದಾನೆ.</verse>
				<verse number="9">ವಿದೇಶಿಯರು ಅವನ ಶಕ್ತಿಯನ್ನು ಹೀರಿಬಿಟ್ಟಿದ್ದಾರೆ. ಅದು ಅವನಿಗೆ ಗೊತ್ತಿಲ್ಲ. ನರೆಕೂದಲು ಸಹ ಅವನ ಮೇಲೆ ಇದೆ. ಆದರೂ ಅವನು ತಿಳಿಯದೇ ಇದ್ದಾನೆ.</verse>
				<verse number="10">ಇಸ್ರಾಯೇಲಿನ ಗರ್ವವು ಅವನಿಗೆ ವಿರುದ್ಧವಾಗಿ ಸಾಕ್ಷಿಕೊಡುತ್ತದೆ. ಆದರೂ ಅವರು ತಮ್ಮ ಯೆಹೋವ ದೇವರ ಕಡೆಗೆ ತಿರುಗದೆ ಇದ್ದಾರೆ. ಆತನನ್ನು ಹುಡುಕದೇ ಇದ್ದಾರೆ.</verse>
				<verse number="11">“ಎಫ್ರಾಯೀಮು ಸಹ ಸುಲಭವಾಗಿ ಮೋಸಕ್ಕೆ ಒಳಗಾಗುವ ಪಾರಿವಾಳದ ಹಾಗಿದ್ದಾನೆ. ಈಗ ಅವರು ಈಜಿಪ್ಟನ್ನು ಕರೆಯುತ್ತಾರೆ. ಈಗ ಅವರು ಅಸ್ಸೀರಿಯದ ಆಶ್ರಯಕ್ಕೆ ಹೋಗುತ್ತಾರೆ.</verse>
				<verse number="12">ಅವರು ಹೋಗುವಾಗ, ನಾನು ಅವರ ಮೇಲೆ ನನ್ನ ಬಲೆಯನ್ನು ಹಾಸುವೆನು. ಆಕಾಶದ ಪಕ್ಷಿಗಳ ಹಾಗೆ, ಅವರನ್ನು ಕೆಳಗೆ ಇಳಿಸಿ, ಅವರು ಒಟ್ಟಿಗೆ ಸೇರುವುದನ್ನು ನಾನು ಕೇಳಿದಾಗ, ನಾನು ಅವುಗಳನ್ನು ಹಿಡಿಯುತ್ತೇನೆ.</verse>
				<verse number="13">ಅವರಿಗೆ ಕಷ್ಟ, ಏಕೆಂದರೆ ಅವರು ನನ್ನನ್ನು ಬಿಟ್ಟು ಹೋಗಿದ್ದಾರೆ. ಅವರು ನಾಶವಾಗಲಿ! ಏಕೆಂದರೆ ಅವರು ನನಗೆ ವಿರುದ್ಧವಾಗಿ ದ್ರೋಹ ಮಾಡಿದ್ದಾರೆ. ನಾನು ಅವರಿಗೆ ವಿಮೋಚನೆ ಮಾಡಿದ್ದರೂ, ಅವರು ನನಗೆ ವಿರುದ್ಧವಾಗಿ ಸುಳ್ಳು ಹೇಳಿದ್ದಾರೆ.</verse>
				<verse number="14">ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ, ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ. ಧಾನ್ಯ ಮತ್ತು ದ್ರಾಕ್ಷಾರಸಗಳ ನಿಮಿತ್ತ ಅವರು ತಮ್ಮ ದೇವರುಗಳಿಗೆ ಮನವಿ ಮಾಡುವಾಗ ತಮ್ಮನ್ನು ತಾವು ಗಾಯಗೊಳಿಸಿಕೊಳ್ಳುತ್ತಾರೆ, ಆದರೆ ಅವರು ನನ್ನಿಂದ ದೂರವಿರುತ್ತಾರೆ.</verse>
				<verse number="15">ನಾನು ಅವರ ತೋಳುಗಳನ್ನು ಬಂಧಿಸಿ ಬಲಪಡಿಸಿದ್ದೇನೆ. ಆದರೂ ಅವರು ನನಗೆ ವಿರುದ್ಧವಾಗಿ ಕೇಡು ಮಾಡಲು ಊಹಿಸಿಕೊಂಡಿದ್ದಾರೆ.</verse>
				<verse number="16">ಅವರು ಮಹೋನ್ನತನಾದಾತನ ಕಡೆಗೆ ತಿರುಗಿಕೊಳ್ಳುವುದಿಲ್ಲ. ಅವರು ಮೋಸದ ಬಿಲ್ಲಿನ ಹಾಗೆ ಇದ್ದಾರೆ. ಅವರ ನಾಯಕರು ನಾಲಿಗೆಯ ಹುಚ್ಚು ಕೂಗಾಟದಿಂದ, ಖಡ್ಗದಿಂದ ಬೀಳುವರು. ಇದೇ ಈಜಿಪ್ಟ್ ದೇಶದಲ್ಲಿ ಅವರಿಗಿರುವ ನಿಂದೆಯಾಗಿದೆ.</verse>
			</chapter>
			<chapter number="8">
				<verse number="1">“ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ. ಅವರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ನ್ಯಾಯ ಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಶತ್ರುಗಳು ಹದ್ದಿನ ಹಾಗೆ ಯೆಹೋವ ದೇವರ ಆಲಯದ ಮೇಲೆ ಬರುವರು.</verse>
				<verse number="2">ಇಸ್ರಾಯೇಲಿನವರು, ‘ನನ್ನ ದೇವರೇ, ನಾವು ನಿಮ್ಮನ್ನು ತಿಳಿದಿದ್ದೇವೆ,’ ಎಂದು ನನಗೆ ಕೂಗುತ್ತಿದ್ದಾರೆ.</verse>
				<verse number="3">ಆದರೆ ಇಸ್ರಾಯೇಲು ಒಳ್ಳೆಯ ಸಂಗತಿಯನ್ನು ತಳ್ಳಿಬಿಟ್ಟಿದೆ. ಒಬ್ಬ ಶತ್ರುವು ಅವನನ್ನು ಹಿಂದಟ್ಟುವನು.</verse>
				<verse number="4">ಅವರು ಅರಸರನ್ನು ನೇಮಿಸಿದ್ದಾರೆ. ಆದರೆ ನನ್ನಿಂದಲ್ಲ. ಅವರು ನನ್ನ ಅನುಮತಿಯಿಲ್ಲದೆ ರಾಜಕುಮಾರರನ್ನು ಆಯ್ಕೆ ಮಾಡಿದ್ದಾರೆ. ಅವರು ತಾವು ನಾಶವಾಗುವಂತೆ ತಮ್ಮ ಬೆಳ್ಳಿಯಿಂದಲೂ, ತಮ್ಮ ಬಂಗಾರದಿಂದಲೂ ತಮಗೆ ವಿಗ್ರಹಗಳನ್ನು ಮಾಡಿಕೊಂಡಿದ್ದಾರೆ.</verse>
				<verse number="5">ಸಮಾರ್ಯವೇ, ನಿನ್ನ ಬಸವ ವಿಗ್ರಹವನ್ನು ಬಿಸಾಡಿಬಿಡು. ನನ್ನ ಕೋಪವು ಅವರ ಮೇಲೆ ಉರಿಯುತ್ತದೆ. ಅವರು ಎಷ್ಟು ಕಾಲ ಶುದ್ಧತೆಗೆ ಅಸಮರ್ಥರಾಗಿರುತ್ತಾರೆ?</verse>
				<verse number="6">ಅವರು ಇಸ್ರಾಯೇಲಿನಿಂದ ಬಂದವರು. ಕಮ್ಮಾರನು ಈ ಬಸವ ವಿಗ್ರಹವನ್ನು ಮಾಡಿದನು. ಅದು ದೇವರಲ್ಲ, ಆದರೆ ಸಮಾರ್ಯದ ಬಸವನನ್ನು ಚೂರುಚೂರಾಗುವುದು.</verse>
				<verse number="7">“ಅವರು ಗಾಳಿಯನ್ನು ಬಿತ್ತಿದ್ದಾರೆ. ಬಿರುಗಾಳಿಯನ್ನು ಕೊಯ್ಯುತ್ತಾರೆ. ಇಸ್ರಾಯೇಲರ ಪೈರು ತೆನೆಗೆ ಬಾರದು. ಮೊಳಕೆಯು ಆಹಾರವನ್ನು ಕೊಡುವುದಿಲ್ಲ. ಒಂದು ವೇಳೆ ಅದು ಕೊಟ್ಟರೂ ವಿದೇಶಿಯರು ಅದನ್ನು ನುಂಗುತ್ತಾರೆ.</verse>
				<verse number="8">ಇಸ್ರಾಯೇಲನ್ನು ಕಬಳಿಸಲಾಗಿದೆ. ಅವರು ಜನಾಂಗಗಳಲ್ಲಿ ಬೇಡವಾದ ಪಾತ್ರೆಯ ಹಾಗೆ ಇದ್ದಾರೆ.</verse>
				<verse number="9">ಅವರು ಒಂಟಿಯಾದ ಕಾಡುಕತ್ತೆಯ ಹಾಗೆ ಅಸ್ಸೀರಿಯಗೆ ಹೋಗಿದ್ದಾರೆ. ಎಫ್ರಾಯೀಮು ಪ್ರೇಮಿಗಳಿಗೆ ತನ್ನನ್ನು ಮಾರಿಕೊಂಡಿದೆ.</verse>
				<verse number="10">ಎಫ್ರಾಯೀಮು ಜನಾಂಗಗಳಿಗೆ ತಮ್ಮನ್ನು ಮಾರಿಕೊಂಡಿದ್ದರೂ ಅವರನ್ನು ನಾನು ಈಗ ಒಟ್ಟುಗೂಡಿಸುವೆನು. ಅವರು ಪ್ರಬಲ ಅರಸನ ಹಿಂಸೆಯಿಂದಾಗಿ ಕಷ್ಟಪಡುವರು.</verse>
				<verse number="11">“ಎಫ್ರಾಯೀಮು ಪಾಪ ಪರಿಹಾರಕ್ಕಾಗಿ ಅನೇಕ ಬಲಿಪೀಠಗಳನ್ನು ಕಟ್ಟಿದ್ದರೂ, ಈ ಬಲಿಪೀಠಗಳೇ ಅವರ ಪಾಪಕ್ಕೆ ಕಾರಣವಾಗಿವೆ.</verse>
				<verse number="12">ನಾನು ನನ್ನ ನಿಯಮದ ಅನೇಕ ಸಂಗತಿಗಳನ್ನು ಅವನಿಗೆ ಬರೆದಿದ್ದೇನೆ. ಆದರೆ ಅವನು ಅವುಗಳನ್ನು ಅನ್ಯವಾದವುಗಳೆಂದು ಪರಿಗಣಿಸಿದನು.</verse>
				<verse number="13">ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ, ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ. ಆದರೆ ಯೆಹೋವ ದೇವರು ಅವುಗಳಿಗೆ ಮೆಚ್ಚುವುದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕಮಾಡಿಕೊಂಡು, ಅವರ ಪಾಪಗಳನ್ನು ಶಿಕ್ಷಿಸಿದರು. ಅವರು ಈಜಿಪ್ಟಿಗೆ ಹಿಂದಿರುಗುವರು.</verse>
				<verse number="14">ಇಸ್ರಾಯೇಲರು ತಮ್ಮ ಸೃಷ್ಟಿಕರ್ತನನ್ನು ಮರೆತುಬಿಟ್ಟು, ಅರಮನೆಗಳನ್ನು ಕಟ್ಟುತ್ತಾರೆ. ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚುಮಾಡಿಕೊಂಡಿದೆ. ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವರ ಕೋಟೆಗಳನ್ನು ನುಂಗಿಬಿಡುವುದು.”</verse>
			</chapter>
			<chapter number="9">
				<verse number="1">ಇಸ್ರಾಯೇಲೇ, ಬೇರೆ ಜನಾಂಗಗಳು ಉಲ್ಲಾಸಿಸುವ ಪ್ರಕಾರ ಸಂತೋಷ ಪಡಬೇಡ. ಏಕೆಂದರೆ ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ಮಾಡಿದ್ದೀಯೆ. ಎಲ್ಲಾ ಧಾನ್ಯದ ಕಣಗಳಲ್ಲಿ ವ್ಯಭಿಚಾರದ ಕೂಲಿಯನ್ನು ಪ್ರೀತಿ ಮಾಡಿದ್ದೀಯೆ.</verse>
				<verse number="2">ಧಾನ್ಯ ಕಣವು ಮತ್ತು ದ್ರಾಕ್ಷಿಯ ತೊಟ್ಟಿಯೂ ಅವರನ್ನು ಪೋಷಿಸುವುದಿಲ್ಲ. ಹೊಸ ದ್ರಾಕ್ಷಾರಸವು ಅವಳಲ್ಲಿ ನಿಂತುಹೋಗುವುವು.</verse>
				<verse number="3">ಅವರು ಯೆಹೋವ ದೇವರ ದೇಶದಲ್ಲಿ ನೆಲೆಸುವುದಿಲ್ಲ. ಆದರೆ ಎಫ್ರಾಯೀಮು ಈಜಿಪ್ಟಿಗೆ ಹಿಂದಿರುಗುವುದು. ಅವರು ಅಸ್ಸೀರಿಯದಲ್ಲಿ ಅಶುದ್ಧವಾದವುಗಳನ್ನು ತಿನ್ನುವರು.</verse>
				<verse number="4">ಅವರು ದ್ರಾಕ್ಷಾರಸವನ್ನು ಕಾಣಿಕೆಯಾಗಿ ಯೆಹೋವ ದೇವರಿಗೆ ಅರ್ಪಿಸುವುದಿಲ್ಲ. ಅವರ ಬಲಿಗಳು ಆತನಿಗೆ ಮೆಚ್ಚಿಗೆಯಾಗಿರುವುದಿಲ್ಲ. ಅವರ ಬಲಿಗಳು ಅವರಿಗೆ ದುಃಖಿಸುವವರ ರೊಟ್ಟಿಯ ಹಾಗಿರುವುವು. ಅದನ್ನು ತಿನ್ನುವವರೆಲ್ಲರೂ ಅಪವಿತ್ರರಾಗುವರು. ಏಕೆಂದರೆ ಅದು ಅವರ ಹೊಟ್ಟೆ ತುಂಬುವುದಕ್ಕೆ ಮಾತ್ರ ಸರಿಯೇ ಹೊರತು, ಯೆಹೋವ ದೇವರ ಆಲಯಕ್ಕೆ ಸಲ್ಲುವುದಿಲ್ಲ.</verse>
				<verse number="5">ಪರಿಶುದ್ಧ ದಿವಸದಲ್ಲಿಯೂ, ಯೆಹೋವ ದೇವರ ಹಬ್ಬಗಳ ದಿವಸದಲ್ಲಿಯೂ ನೀನು ಏನು ಮಾಡುತ್ತೀ?</verse>
				<verse number="6">ಇಗೋ, ನಾಶನದಿಂದ ಅವರು ತಪ್ಪಿಸಿಕೊಂಡರೂ ಈಜಿಪ್ಟ್ ಅವರನ್ನು ಕೂಡಿಸುವುದು. ಮೋಫ್ ಪಟ್ಟಣವು ಅವರನ್ನು ಹೂಳುವುದು. ಅವರ ಬೆಳ್ಳಿಯ ಬೊಕ್ಕಸಗಳು ಮುಳ್ಳು ಪೊದೆಗಳ ಪಾಲಾಗುವುವು. ಮುಳ್ಳುಗಿಡಗಳು ಅವರ ಗುಡಾರಗಳನ್ನು ಆವರಿಸಿಕೊಂಡಿರುವುದು.</verse>
				<verse number="7">ದಂಡನೆಯ ದಿವಸಗಳು ಬಂದಿವೆ, ಮುಯ್ಯಿ ತೀರಿಸುವ ದಿವಸಗಳೂ ಸಮೀಪವಾಗಿವೆ. ಇಸ್ರಾಯೇಲು ಅದನ್ನು ತಿಳಿದುಕೊಳ್ಳಲಿ. ಏಕೆಂದರೆ ನಿನ್ನ ಪಾಪಗಳು ಬಹಳವಾಗಿರುವುದರಿಂದಲೂ, ದ್ವೇಷವು ಹೆಚ್ಚಾಗಿರುವುದರಿಂದಲೂ, “ಪ್ರವಾದಿ ಮೂರ್ಖನೂ, ಪ್ರೇರಿತ ಮನುಷ್ಯನು ಹುಚ್ಚನೂ,” ಎಂದು ಇಸ್ರಾಯೇಲು ಹೇಳಿಕೊಳ್ಳುತ್ತದೆ.</verse>
				<verse number="8">ನನ್ನ ದೇವರೊಂದಿಗೆ ಪ್ರವಾದಿಯು ಎಫ್ರಾಯೀಮನ ಮೇಲೆ ಕಾವಲುಗಾರನಾಗಿದ್ದಾನೆ, ಆದರೂ ಅವನ ಮಾರ್ಗಗಳಲ್ಲೆಲ್ಲ ಬೇಟೆಯ ಬಲೆ ಒಡ್ಡಲಾಗಿದೆ ಮತ್ತು ಅವನ ದೇವರ ಮನೆಯಲ್ಲಿ ದ್ವೇಷವಿದೆ.</verse>
				<verse number="9">ಗಿಬೆಯದ ದಿವಸಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ. ಆದ್ದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕ ಮಾಡಿಕೊಳ್ಳುವನು. ಅವರ ಪಾಪಕ್ಕೆ ತನ್ನ ದಂಡನೆಯನ್ನು ವಿಧಿಸುವನು.</verse>
				<verse number="10">“ನಾನು ಮರುಭೂಮಿಯಲ್ಲಿ ದ್ರಾಕ್ಷಾಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು. ಆದರೆ ಅವರು ಬಾಳ್ ಪೆಯೋರನ ಹತ್ತಿರ ಬಂದು ನಾಚಿಕೆಯ ವಿಗ್ರಹಕ್ಕೆ ತಮ್ಮನ್ನು ಪ್ರತ್ಯೇಕಿಸಿಕೊಂಡರು. ಅವರು ಪ್ರೀತಿಸಿದ ವಿಗ್ರಹಗಳ ಹಾಗೆ ಅಸಹ್ಯರಾದರು.</verse>
				<verse number="11">ಎಫ್ರಾಯೀಮ್ ಘನತೆಯು ಪಕ್ಷಿಯಂತೆ ಹಾರಿಹೋಗುವುದು. ಜನನವಿಲ್ಲ, ಗರ್ಭಧಾರಣೆ ಇಲ್ಲ, ಪ್ರಸವವಿಲ್ಲ.</verse>
				<verse number="12">ಅವರು ತಮ್ಮ ಮಕ್ಕಳನ್ನು ಬೆಳೆಸಿದ್ದರೂ, ಅವರ ಮಕ್ಕಳಲ್ಲಿ ಯಾರೂ ಉಳಿಯದ ಹಾಗೆ ನಾನು ಅವರನ್ನು ಮಕ್ಕಳಿಲ್ಲದವರನ್ನಾಗಿ ಮಾಡುವೆನು. ನಾನು ಅವರನ್ನು ಬಿಟ್ಟು ಹೋಗುವಾಗ ಅವರಿಗೆ ಕಷ್ಟ!</verse>
				<verse number="13">ಎಫ್ರಾಯೀಮ್ ಟೈರ್‌ನಂತಹ ಸುಂದರವಾದ ಸ್ಥಳದಲ್ಲಿ ನೆಡುವುದನ್ನು ನಾನು ಕಂಡೆನು. ಆದರೆ ಎಫ್ರಾಯೀಮ್ ತನ್ನ ಮಕ್ಕಳನ್ನು ಹತ್ಯಗೆ ಈಡಾಗುವಂತೆ ಕಳುಹಿಸುವುದು.”</verse>
				<verse number="14">ಯೆಹೋವ ದೇವರೇ, ಅವರಿಗೆ ಕೊಡಿರಿ. ಅವರಿಗೆ ನೀವು ಏನು ಕೊಡುತ್ತೀರಿ? ಗರ್ಭ ಸ್ರಾವ, ಗರ್ಭವನ್ನು ಮತ್ತು ಬತ್ತಿದ ಸ್ತನಗಳನ್ನು ಅವರಿಗೆ ಕೊಡಿರಿ.</verse>
				<verse number="15">ಅವರ ದುಷ್ಟತನವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿ ಅವರನ್ನು ಹಗೆ ಮಾಡಿದ್ದೇನೆ. ಅವರ ಪಾಪ ಕೃತ್ಯಗಳ ನಿಮಿತ್ತ ಅವರನ್ನು ನನ್ನ ಆಲಯದೊಳಗಿಂದ ಹೊರಡಿಸಿ, ಅವರನ್ನು ಇನ್ನು ಪ್ರೀತಿಸುವುದೇ ಇಲ್ಲ. ಅವರ ಅಧಿಕಾರಿಗಳೆಲ್ಲಾ ತಿರುಗಿ ಬೀಳುವವರೇ.</verse>
				<verse number="16">ಎಫ್ರಾಯೀಮು ಹೊಡೆತಕ್ಕೆ ಒಳಗಾಗಿದೆ. ಅವರ ಬೇರು ಒಣಗಿಹೋಗಿದೆ, ಅವರು ಫಲವನ್ನು ಕೊಡುವುದಿಲ್ಲ, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.</verse>
				<verse number="17">ನನ್ನ ದೇವರು ಅವರನ್ನು ತಳ್ಳಿಬಿಡುವರು. ಏಕೆಂದರೆ ಅವರು ಆತನಿಗೆ ವಿಧೇಯರಾಗಲಿಲ್ಲ. ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.</verse>
			</chapter>
			<chapter number="10">
				<verse number="1">ಇಸ್ರಾಯೇಲು ಹರಡುವ ದ್ರಾಕ್ಷಿಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿಸುತ್ತಾನೆ. ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಅಭಿವೃದ್ಧಿಯ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿದ್ದಾನೆ.</verse>
				<verse number="2">ಅವರ ಹೃದಯವು ವಂಚಕವಾದದ್ದು. ಈಗ ಅವರು ಅಪರಾಧಗಳನ್ನು ಹೊರಬೇಕು. ಯೆಹೋವ ದೇವರು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವರು.</verse>
				<verse number="3">ಆಗ ಅವರು, “ನಮಗೆ ಅರಸನಿಲ್ಲ, ಏಕೆಂದರೆ ನಾವು ಯೆಹೋವ ದೇವರಲ್ಲಿ ಭಯಭಕ್ತಿ ಇಟ್ಟವರಲ್ಲ. ಅರಸನು ನಮಗಿದ್ದರೂ ಏನು ಮಾಡುವನು?” ಎಂದುಕೊಳ್ಳುತ್ತಾರೆ.</verse>
				<verse number="4">ಅವರು ಮಾತುಗಳನ್ನಾಡಿ ಒಡಂಬಡಿಕೆಯನ್ನು ಮಾಡುವುದಕ್ಕೆ ಸುಳ್ಳು ಪ್ರಮಾಣವನ್ನು ಮಾಡುತ್ತಾರೆ. ಆದ್ದರಿಂದ ನ್ಯಾಯತೀರ್ಪು ವಿಷದ ಕಳೆಯ ಹಾಗೆ ಹೊಲದ ಸಾಲುಗಳಲ್ಲಿ ಮೊಳೆಯುತ್ತದೆ.</verse>
				<verse number="5">ಬೇತಾವೆನಿನ ಬಸವ ವಿಗ್ರಹಕ್ಕೆ ಸಮಾರ್ಯದ ನಿವಾಸಿಗಳು ಭಯಪಡುವರು. ಅದರಲ್ಲಿ ಆನಂದಿಸಿದ ಜನರು ಅದಕ್ಕೋಸ್ಕರ ಗೋಳಾಡುವರು. ಅದರ ಯಾಜಕರು ನಡುಗುವರು. ಏಕೆಂದರೆ ಅದರ ವೈಭವವು ಅದರಿಂದ ಕುಂದಿಹೋಯಿತು.</verse>
				<verse number="6">ಅದು ಸಹ, ಮಹಾರಾಜನಿಗೆ ಕಾಣಿಕೆಯಾಗಿ ಅಸ್ಸೀರಿಯಕ್ಕೆ ಒಯ್ಯಲಾಗುವುದು. ಎಫ್ರಾಯೀಮು ನಾಚಿಕೆಯನ್ನು ಹೊಂದುವುದು. ಇಸ್ರಾಯೇಲ್ ಸಹ ತನ್ನ ಸಲಹೆಯ ಬಗ್ಗೆ ನಾಚಿಕೆಪಡುತ್ತದೆ.</verse>
				<verse number="7">ಸಮಾರ್ಯ ಹಾಗು ಅದರ ಅರಸನು ನೀರಿನ ಮೇಲಿನ ಕಡ್ಡಿಯ ಹಾಗೆ ಅಳಿದು ಹೋಗುವನು.</verse>
				<verse number="8">ಇಸ್ರಾಯೇಲಿನ ಪಾಪಕ್ಕೆ ಆಸ್ಪದವಾದ ಆವೆನಿನ ಉನ್ನತ ಪೂಜಾಸ್ಥಳಗಳು ಹಾಳಾಗಿ ಹೋಗುವುವು. ಮುಳ್ಳುಗಿಡಗಳೂ, ಕಳೆಗಳೂ ಬಲಿಪೀಠಗಳ ಮೇಲೆ ಬೆಳೆಯುವುವು. ಜನರು ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ! ಗುಡ್ಡಗಳಿಗೆ, ನಮ್ಮನ್ನು ಮುಚ್ಚಿಕೊಳ್ಳಿರಿ!” ಎನ್ನುವರು.</verse>
				<verse number="9">ಇಸ್ರಾಯೇಲೇ ನೀನು ಗಿಬೆಯದಲ್ಲಿದ್ದ ಕಾಲದಿಂದ ನನ್ನ ವಿರುದ್ಧ ಪಾಪ ಮಾಡುತ್ತಲೇ ಬಂದಿರುವೆ. ನಿನ್ನ ಜನರು ಪಾಪದಲ್ಲಿಯೇ ಮುಂದುವರಿಯುತ್ತಿದ್ದಾರೆ. ಗಿಬೆಯದಲ್ಲಿ ಕೆಟ್ಟದ್ದನ್ನು ಮಾಡುವ ಜನರು ಯುದ್ಧಕ್ಕೆ ತುತ್ತಾಗಲಿದ್ದಾರೆ.</verse>
				<verse number="10">ನಾನು ಅವರನ್ನು ಶಿಕ್ಷಿಸಲು ನನಗೆ ಮನಸ್ಸುಂಟು. ಅವರ ಇಮ್ಮಡಿ ಅಪರಾಧಕ್ಕೆ ತಕ್ಕ ಶಾಸ್ತಿಯಾಗುವುದು, ಆಗ ಇತರ ರಾಷ್ಟ್ರಗಳು ಅವರಿಗೆ ವಿರುದ್ಧವಾಗಿ ಒಂದುಗೂಡುವುವು.</verse>
				<verse number="11">ಎಫ್ರಾಯೀಮು ಒಂದು ತರಬೇತಿ ಪಡೆದ ಕಡಸಾಗಿದೆ. ಅದು ತುಳಿಯುವುದನ್ನು ಇಷ್ಟಪಡುತ್ತದೆ. ಆದರೆ ನಾನು ಅದರ ಸುಂದರವಾದ ಕುತ್ತಿಗೆಯ ಮೇಲೆ ನೊಗವನ್ನು ಹೊರುತ್ತೇನೆ. ಎಫ್ರಾಯೀಮು ಸವಾರಿ ಮಾಡುವ ಹಾಗೆ ನಾನು ಮಾಡುವೆನು. ಯೆಹೂದ ಉಳುವನು. ಯಾಕೋಬನು ಅವನ ಹೆಂಟೆಗಳನ್ನು ಒಡೆಯುವನು.</verse>
				<verse number="12">ನಿಮಗಾಗಿ ನೀತಿಯ ಬೀಜವನ್ನು ಬಿತ್ತಿರಿ. ಪ್ರೀತಿಯ ಫಲವನ್ನು ಕೊಯ್ಯಿರಿ. ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ. ಏಕೆಂದರೆ ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವವರೆಗೂ ಯೆಹೋವ ದೇವರನ್ನು ಹುಡುಕುವ ಸಮಯ ಇದೇ.</verse>
				<verse number="13">ಆದರೆ ನೀವು ದುಷ್ಟತ್ವವನ್ನು ಬಿತ್ತಿ, ಅನ್ಯಾಯವನ್ನು ಕೊಯ್ದಿರಿ, ವಂಚನೆಯ ಫಲವನ್ನು ತಿಂದಿದ್ದೀರಿ. ಏಕೆಂದರೆ ನೀವು ನಿಮ್ಮ ಸ್ವಂತ ಬಲದಲ್ಲಿ ನಿಮ್ಮ ಶೂರರಲ್ಲಿಯೂ ಭರವಸೆಯಿಟ್ಟಿದ್ದೀರಿ.</verse>
				<verse number="14">ಆದ್ದರಿಂದ ನಿನ್ನ ಜನರಲ್ಲಿ ಗಲಭೆ ಉಂಟಾಗುವುದು. ಶಲ್ಮಾನ ರಾಜನು ಬೇತ್ ಅರ್ಬೇಲನ್ನು ಯುದ್ಧದ ದಿನದಲ್ಲಿ ನಾಶಮಾಡಿದ ಪ್ರಕಾರ, ನಿನ್ನ ಕೋಟೆಗಳೆಲ್ಲಾ ನಾಶವಾಗುವವು. ತಾಯಿ, ತನ್ನ ಮಕ್ಕಳ ಸಹಿತ ಬಂಡೆಗೆ ಅಪ್ಪಳಿಸಿದ</verse>
				<verse number="15">ಹಾಗೆಯೇ, ಬಹಳ ದುಷ್ಟತ್ವದ ನಿಮಿತ್ತ ಬೇತೇಲಿಗೆ ಸಂಭವಿಸುವುದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ನಾಶವಾಗುವನು.</verse>
			</chapter>
			<chapter number="11">
				<verse number="1">“ಇಸ್ರಾಯೇಲನು ಹುಡುಗನಾಗಿದ್ದಾಗ, ನಾನು ಅವನನ್ನು ಪ್ರೀತಿ ಮಾಡಿದೆನು ಮತ್ತು ಈಜಿಪ್ಟಿನಿಂದ ನನ್ನ ಮಗನನ್ನು ನಾನು ಕರೆದೆನು.</verse>
				<verse number="2">ನಾನು ಇಸ್ರಾಯೇಲನ್ನು ಹೆಚ್ಚಾಗಿ ಕರೆದ ಹಾಗೆಯೇ, ನನ್ನಿಂದ ಅವರು ದೂರ ಹೊರಟು ಹೋದರು. ಅವರು ಬಾಳ್ ದೇವತೆಗಳಿಗೆ ಬಲಿ ಅರ್ಪಿಸಿದರು. ಕೆತ್ತಿದ ವಿಗ್ರಹಗಳಿಗೆ ಧೂಪವನ್ನು ಸುಟ್ಟರು.</verse>
				<verse number="3">ನಾನು ಎಫ್ರಾಯೀಮಿನ ತೋಳುಗಳನ್ನು ಹಿಡಿದು ನಡೆಯುವುದನ್ನು ಕಲಿಸಿದೆನು. ಆದರೆ ನಾನು ಅವರನ್ನು ಸ್ವಸ್ಥ ಮಾಡಿದ್ದೇನೆಂದು ಅವರಿಗೆ ತಿಳಿಯಲಿಲ್ಲ.</verse>
				<verse number="4">ನಾನು ಅವರನ್ನು ಮನುಷ್ಯನ ಹಗ್ಗಗಳಿಂದಲೂ, ಪ್ರೀತಿಯ ಬಂಧನಗಳಿಂದಲೂ ಎಳೆದೆನು. ಅವರಿಗೆ ನಾನು ಚಿಕ್ಕ ಮಗುವನ್ನು ಕೆನ್ನೆಯವರೆಗೆ ಎತ್ತುವವರಂತೆ ಇದ್ದೆ, ಮತ್ತು ನಾನು ಅವರಿಗೆ ಬಾಗಿ ತಿನ್ನಿಸುತ್ತಿದ್ದೆ.</verse>
				<verse number="5">“ಅವರು ಮಾನಸಾಂತರಪಡಲು ನಿರಾಕರಿಸಿದ್ದರಿಂದ, ಪುನಃ ಈಜಿಪ್ಟಿಗೆ ಹಿಂದಿರುಗುವರು, ಅಸ್ಸೀರಿಯದ ಆಳ್ವಿಕೆಗೆ ಒಳಗಾಗುವರು.</verse>
				<verse number="6">ಅವರ ಪಟ್ಟಣಗಳಲ್ಲಿ ಖಡ್ಗವು ಹೊಳೆಯುವುದು. ಅದು ಅವರ ಸುಳ್ಳು ಪ್ರವಾದಿಗಳನ್ನು ನುಂಗಿಹಾಕುತ್ತದೆ. ಮತ್ತು ಅವರ ಯೋಜನೆಗಳನ್ನು ಕೊನೆಗೊಳಿಸುತ್ತದೆ.</verse>
				<verse number="7">ನನ್ನ ಜನರು ನನ್ನ ಕಡೆಯಿಂದ ಹಿಂಜಾರಬೇಕೆಂದು ತೀರ್ಮಾನಿಸಿದ್ದಾರೆ. ಅವರು ನನ್ನನ್ನು ಸರ್ವೋನ್ನತ ದೇವರು ಎಂದು ಕರೆದರೂ ನಾನು ಅವರನ್ನು ಯಾವುದೇ ರೀತಿಯಲ್ಲಿ ಉನ್ನತೀಕರಿಸುವುದಿಲ್ಲ.</verse>
				<verse number="8">“ಎಫ್ರಾಯೀಮೇ, ನಿನ್ನನ್ನು ಹೇಗೆ ಬಿಟ್ಟುಬಿಡಲಿ? ಇಸ್ರಾಯೇಲೇ, ನಿನ್ನನ್ನು ಹೇಗೆ ಕೈಬಿಡಲಿ? ಅದ್ಮದ ಹಾಗೆ ನಿನ್ನನ್ನು ದುರ್ಗತಿಗೆ ಹೇಗೆ ಒಪ್ಪಿಸಲಿ? ಚೆಬೋಯಿಮನಂತೆ ನಿನ್ನನ್ನು ಹೇಗೆ ನಾಶಮಾಡಲಿ? ನನ್ನ ಹೃದಯವು ನನ್ನಲ್ಲಿ ಮಾರ್ಪಟ್ಟಿದೆ. ನನ್ನಲ್ಲಿ ಕರುಣೆ ಉಕ್ಕಿ ಬಂದಿದೆ.</verse>
				<verse number="9">ನನ್ನ ಕೋಪದ ಉರಿಯನ್ನು ನಾನು ತೀರಿಸುವುದಿಲ್ಲ. ನಾನು ಎಫ್ರಾಯೀಮನ್ನು ತಿರುಗಿ ನಾಶಮಾಡುವುದಿಲ್ಲ. ಏಕೆಂದರೆ ನಾನು ಮನುಷ್ಯನಲ್ಲ, ದೇವರೇ. ನಿನ್ನ ಮಧ್ಯದಲ್ಲಿ ಪರಿಶುದ್ಧನಾಗಿದ್ದೇನೆ. ನಾನು ಅವರ ಪಟ್ಟಣಗಳ ವಿರುದ್ಧ ಬರುವುದಿಲ್ಲ.</verse>
				<verse number="10">ಅವರು ಯೆಹೋವ ದೇವರ ಹಿಂದೆ ಹೋಗುವರು. ಅವರು ಸಿಂಹದ ಹಾಗೆ ಗರ್ಜಿಸುವರು. ಅವರು ಗರ್ಜಿಸುವಾಗ ಪಶ್ಚಿಮದಿಂದ ಮಕ್ಕಳು ನಡುಗುತ್ತಾ ಬರುವರು.</verse>
				<verse number="11">ಈಜಿಪ್ಟಿನಿಂದ ಪಕ್ಷಿಯಗಳಂತೆಯೂ ಅಸ್ಸೀರಿಯದಿಂದ ಪಾರಿವಾಳಗಳಂತೆಯೂ ಅವರು ಬರುವರು. ನಾನು ಅವರ ಮನೆಗಳಲ್ಲಿ ಇರುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="12">ಎಫ್ರಾಯೀಮು ಸುಳ್ಳಿನಿಂದ ಮತ್ತು ಇಸ್ರಾಯೇಲಿನ ಮನೆಯವರು ಮೋಸದಿಂದ ನನ್ನನ್ನು ಸುತ್ತಿಕೊಂಡಿದ್ದಾರೆ. ಯೆಹೂದ ಕೂಡ ಪರಿಶುದ್ಧರೂ ನಂಬಿಗಸ್ತರೂ ಆದ ದೇವರ ವಿರುದ್ಧ ಅಶಿಸ್ತಿನಿಂದ ಇದೆ.</verse>
			</chapter>
			<chapter number="12">
				<verse number="1">ಎಫ್ರಾಯೀಮು ಗಾಳಿಯನ್ನು ತಿನ್ನುತ್ತದೆ. ಪೂರ್ವದ ಗಾಳಿಯ ಹಿಂದೆ ಹಿಂಬಾಲಿಸಿಕೊಂಡು ಹೋಗುತ್ತದೆ. ಅವನು ದಿನವೆಲ್ಲಾ ಸುಳ್ಳನ್ನೂ, ಹಿಂಸೆಯನ್ನೂ ಹೆಚ್ಚಿಸಿ, ಅಸ್ಸೀರಿಯರೊಂದಿಗೆ ಒಡಂಬಡಿಕೆ ಮಾಡಿಕೊಂಡು, ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಹೊತ್ತುಕೊಂಡು ಹೋಗುತ್ತಾನೆ.</verse>
				<verse number="2">ಯೆಹೂದರೊಂದಿಗೆ ಯೆಹೋವ ದೇವರು ಆಪಾದನೆ ಮಾಡಿ, ಯಾಕೋಬನನ್ನು ತನ್ನ ಮಾರ್ಗಗಳ ಪ್ರಕಾರ ಶಿಕ್ಷಿಸಿ, ಅವನ ಕ್ರಿಯೆಗಳ ಪ್ರಕಾರ ಮುಯ್ಯಿ ತೀರಿಸಿ, ಅವನಿಗೆ ಪ್ರತಿಫಲವನ್ನು ಕೊಡುವರು.</verse>
				<verse number="3">ಗರ್ಭದಲ್ಲಿ ಅವನು ತನ್ನ ಸಹೋದರನನ್ನು ಹಿಮ್ಮಡಿಯಿಂದ ಹಿಡಿದು, ಮನುಷ್ಯನಾಗಿಯೇ ದೇವರೊಂದಿಗೆ ಹೋರಾಡಿದನು.</verse>
				<verse number="4">ಯಾಕೋಬನು ದೇವದೂತನ ಸಂಗಡ ಹೋರಾಡಿ ಜಯಿಸಿದನು. ಅವನು ಅತ್ತು ಆತನ ಅನುಗ್ರಹಕ್ಕಾಗಿ ವಿಜ್ಞಾಪನೆಯನ್ನು ಸಲ್ಲಿಸಿದನು. ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು. ಅಲ್ಲಿ ಅವನು ಆತನೊಂದಿಗೆ ಮಾತನಾಡಿದನು.</verse>
				<verse number="5">ಅವರೇ ಸರ್ವಶಕ್ತರಾದ ಯೆಹೋವ ದೇವರು; ಅವರ ಪ್ರಸಿದ್ಧ ಹೆಸರು ಯೆಹೋವ ದೇವರು ಎಂಬುದೇ.</verse>
				<verse number="6">ಆದರೆ ನೀನು ನಿನ್ನ ದೇವರ ಕಡೆಗೆ ತಿರುಗಿಕೋ. ಪ್ರೀತಿಯನ್ನೂ, ನ್ಯಾಯವನ್ನೂ ಪಾಲಿಸು ಮತ್ತು ನಿನ್ನ ದೇವರಿಗಾಗಿ ಯಾವಾಗಲೂ ಕಾದುಕೊಂಡಿರು.</verse>
				<verse number="7">ಅವನು ವ್ಯಾಪಾರಿಯಾಗಿದ್ದು, ಅವನ ಕೈಯಲ್ಲಿ ಮೋಸದ ತಕ್ಕಡಿ ಇದೆ. ಇತರರಿಂದ ಕಸಿದುಕೊಳ್ಳಬೇಕೆಂಬುದೇ ಅವನ ದುರಾಶೆ.</verse>
				<verse number="8">ಎಫ್ರಾಯೀಮು ಹೆಚ್ಚಳ ಪಡುತ್ತಾ ಹೀಗೆಂದು ಹೇಳುತ್ತದೆ, “ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು. ನನ್ನ ಐಶ್ವರ್ಯದಿಂದಾಗಿ ಅವರು ನನ್ನಲ್ಲಿ ಯಾವ ಅಪರಾಧ ಅಥವಾ ಪಾಪವನ್ನು ಕಾಣುವುದಿಲ್ಲ.”</verse>
				<verse number="9">ಆದರೆ ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಿನಿಂದಲೂ, ನಿನ್ನ ದೇವರಾಗಿರುವ ಯೆಹೋವ ದೇವರಾದ ನಾನು, ಜಾತ್ರೆಯ ದಿನಗಳಲ್ಲಿ ನೀವು ವನವಾಸ ಮಾಡಿದಂತೆ, ನಿಮ್ಮನ್ನು ಪುನಃ ಗುಡಾರದ ವಾಸಕ್ಕೆ ಗುರಿಪಡಿಸುವೆನು.</verse>
				<verse number="10">ನಾನು ಪ್ರವಾದಿಗಳೊಂದಿಗೆ ಮಾತನಾಡಿದ್ದೇನೆ. ಅವರಿಗೆ ಹಲವಾರು ದರ್ಶನಗಳನ್ನು ದಯಪಾಲಿಸಿದ್ದೇನೆ. ಅವರ ಮುಖಾಂತರ ಸಾಮ್ಯಗಳನ್ನು ಜನರಿಗೆ ಹೇಳಿದ್ದೇನೆ.</verse>
				<verse number="11">ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ಅಲ್ಲಿನ ಜನರು ಅಯೋಗ್ಯರೇ? ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆಯೇ? ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲು ಕುಪ್ಪೆಯ ಹಾಗಿವೆ, ಎಂದು ಹೇಳಿದನು.</verse>
				<verse number="12">ಯಾಕೋಬನು ಸಿರಿಯಾ ದೇಶಕ್ಕೆ ಓಡಿಹೋದನು. ಇಸ್ರಾಯೇಲನು ಹೆಂಡತಿಯ ನಿಮಿತ್ತ ಸೇವೆಮಾಡಿ, ಹೆಂಡತಿಯ ನಿಮಿತ್ತ ಕುರಿಗಳನ್ನು ಕಾದನು.</verse>
				<verse number="13">ಪ್ರವಾದಿಯಿಂದ ಯೆಹೋವ ದೇವರು ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಬರಮಾಡಿ, ಆ ಪ್ರವಾದಿಯಿಂದಲೇ ಆತನು ಅವರನ್ನು ಕಾಪಾಡಿದರು.</verse>
				<verse number="14">ಆದರೂ ಎಫ್ರಾಯೀಮು ಬಹು ಕಠೋರವಾಗಿ ಆತನನ್ನು ರೇಗಿಸಿತು. ಆದ್ದರಿಂದ ಯೆಹೋವ ದೇವರು ಅದರ ರಕ್ತಾಪರಾಧವನ್ನು ಅದರ ಮೇಲೆ ಬರಮಾಡುವರು. ಅವನ ನಿಂದೆಯನ್ನು ಯೆಹೋವ ದೇವರು ಅವನ ಮೇಲೆ ಬರಮಾಡುವರು.</verse>
			</chapter>
			<chapter number="13">
				<verse number="1">“ಪೂರ್ವದಲ್ಲಿ ಎಫ್ರಾಯೀಮು ಮಾತನಾಡುವಾಗ, ಅವನು ತನ್ನನ್ನು ಇಸ್ರಾಯೇಲಿನಲ್ಲಿ ಹೆಚ್ಚಿಸಿಕೊಂಡನು. ಆದರೆ ಬಾಳನ ಆರಾಧನೆಯಲ್ಲಿ ಅವನು ಅಪರಾಧಿಯಾಗಿ ಸತ್ತನು.</verse>
				<verse number="2">ಈಗ ಅವರು ಹೆಚ್ಚೆಚ್ಚಾಗಿ ಪಾಪವನ್ನು ಮಾಡುತ್ತಾರೆ. ಸ್ವಂತ ಬುದ್ಧಿಯ ಪ್ರಕಾರ ತಮ್ಮ ಬೆಳ್ಳಿಯಿಂದ ಎರಕದ ವಿಗ್ರಹಗಳನ್ನೂ, ಮೂರ್ತಿಗಳನ್ನೂ ಮಾಡಿಕೊಂಡಿದ್ದಾರೆ. ಅದೆಲ್ಲವೂ ಕಮ್ಮಾರರ ಕೈಕೆಲಸವೇ. ಅವರು ನರಬಲಿಯನ್ನು ಅರ್ಪಿಸುತ್ತಾರೆ, ಬಸವನ ವಿಗ್ರಹಕ್ಕೆ ಮುದ್ದಿಡುತ್ತಾರೆ,” ಎಂದು ಜನರು ಅವರ ಬಗ್ಗೆ ಹೇಳುತ್ತಾರೆ.</verse>
				<verse number="3">ಆದ್ದರಿಂದ ಅವರು ಪ್ರಾತಃಕಾಲದ ಮಂಜಿನ ಹಾಗೆಯೂ, ಬೇಗನೆ ಮಾಯವಾಗುವ ಇಬ್ಬನಿಯ ಹಾಗೆಯೂ, ಸುಳಿಗಾಳಿಯು ಕಣದಿಂದ ಬಡಿದುಕೊಂಡು ಹೋಗುವ ಹೊಟ್ಟಿನ ಹಾಗೆಯೂ, ಚಿಮಿಣಿಯಿಂದ ಹೊರಡುವ ಹೊಗೆಯ ಹಾಗೆಯೂ ಇರುವರು.</verse>
				<verse number="4">ಆದರೂ ನಾನು ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಿನಿಂದ, ನಾನೇ ನಿನ್ನ ದೇವರಾಗಿರುವ ಯೆಹೋವನಾಗಿದ್ದೇನೆ. ನೀನು ನನ್ನ ಹೊರತು ಯಾವ ದೇವರನ್ನೂ ತಿಳಿದುಕೊಳ್ಳಬಾರದು. ಏಕೆಂದರೆ ನನ್ನ ಹೊರತು ನಿನಗೆ ಬೇರೆ ರಕ್ಷಕನು ಇಲ್ಲ.</verse>
				<verse number="5">ನಾನು ನಿನ್ನನ್ನು ಮರುಭೂಮಿಯಲ್ಲಿಯೂ, ಬಹು ಬಾಯಾರಿಕೆಯ ದೇಶದಲ್ಲಿಯೂ ತಿಳಿದುಕೊಂಡಿದ್ದೇನೆ.</verse>
				<verse number="6">ನಾನು ಅವರಿಗೆ ಆಹಾರ ಕೊಟ್ಟೆನು, ಅವರು ತೃಪ್ತರಾದರು. ಅವರು ತೃಪ್ತರಾದಾಗ, ಅಹಂಕಾರಿಗಳಾದರು, ಅನಂತರ ಅವರು ನನ್ನನ್ನು ಮರೆತುಬಿಟ್ಟರು.</verse>
				<verse number="7">ಆದ್ದರಿಂದ ನಾನು ಅವರಿಗೆ ಸಿಂಹದ ಹಾಗೆ ಆಗುವೆನು. ಮಾರ್ಗದಲ್ಲಿ ಚಿರತೆಯ ಹಾಗೆ ಅವರಿಗಾಗಿ ಹೊಂಚುಹಾಕುವೆನು.</verse>
				<verse number="8">ನಾನು ಮರಿಯನ್ನು ಕಳೆದುಕೊಂಡ ಕರಡಿಯಂತೆ ಅವರನ್ನು ಎದುರುಗೊಳ್ಳುವೆನು. ಅವರ ಹೃದಯದ ಪೊರೆಯನ್ನು ಹರಿದುಬಿಡುವೆನು. ನಾನು ಸಿಂಹದ ಹಾಗೆ ಅವರನ್ನು ನುಂಗುವೆನು. ಕಾಡುಮೃಗವು ಅವರನ್ನು ಸೀಳಿ ಹಾಕುವುದು.</verse>
				<verse number="9">“ಇಸ್ರಾಯೇಲೇ, ನೀನು ನಿನ್ನ ಬೆಂಬಲವಾದ ನನಗೆ ತಿರುಗಿಬಿದ್ದದರಿಂದ ನಾಶವಾಗಿದ್ದೀ.</verse>
				<verse number="10">ಈಗ ನಿನ್ನ ಅರಸನು ಎಲ್ಲಿ? ನಿನ್ನ ಪಟ್ಟಣಗಳೆಲ್ಲಾ ನಿನ್ನವರನ್ನು ಉದ್ಧರಿಸುವನೋ? ನನಗೆ ರಾಜ್ಯವನ್ನೂ ರಾಜ್ಯಾಧಿಕಾರಿಗಳನ್ನೂ ದಯಪಾಲಿಸು ಎಂದು ನನ್ನನ್ನು ಕೇಳಿಕೊಂಡಿಯಷ್ಟೆ. ಆ ನ್ಯಾಯಾಧಿಪತಿಗಳು ಎಲ್ಲಿ?</verse>
				<verse number="11">ನನ್ನ ಕೋಪದಲ್ಲಿ ನಿನಗೆ ಅರಸನನ್ನು ಕೊಟ್ಟೆನು ಮತ್ತು ನನ್ನ ರೌದ್ರದಲ್ಲಿ ಅವನನ್ನು ತೆಗೆದುಹಾಕಿದೆನು.</verse>
				<verse number="12">ಎಫ್ರಾಯೀಮಿನ ದುಷ್ಕೃತ್ಯವು ಸಂಗ್ರಹವಾಗಿದೆ. ಅವನ ಪಾಪವು ದಾಖಲೆಯಾಗಿದೆ.</verse>
				<verse number="13">ಎಫ್ರಾಯೀಮಿಗೆ ಪ್ರಸವವೇದನೆ ಬಂದಿದೆ. ಅಷ್ಟೇ ಅಲ್ಲ. ಅದೊಂದು ಮಂಕು ಮಗುವಿನಂತಿದೆ. ಹುಟ್ಟಿ, ಹೊರಗೆ ಬರಬಹುದಾದರೂ, ಅವನು ಬಾರದೆ ಇದ್ದಾನೆ.</verse>
				<verse number="14">“ಸಮಾಧಿಯ ಶಕ್ತಿಯಿಂದ ಅವರನ್ನು ಕ್ರಯಕೊಟ್ಟು ವಿಮೋಚಿಸುವೆನು. ಮರಣದಿಂದ ಅವರನ್ನು ಬಿಡಿಸುವೆನು. ಮರಣವೇ ನಿನ್ನ ಉಪದ್ರವ ಎಲ್ಲಿ? ಪಾತಾಳವೇ ನಿನ್ನ ವಿನಾಶವೆಲ್ಲಿ? “ಅನುಕಂಪವು ನನ್ನಿಂದ ದೂರವಾಗಿದೆ.</verse>
				<verse number="15">ಎಫ್ರಾಯೀಮು ತನ್ನ ಸಹೋದರರಲ್ಲಿ ಫಲ ಸಮೃದ್ಧವಾಗಿದ್ದರೂ, ಕಾಡಿನಿಂದ ಯೆಹೋವ ದೇವರು ಬೀಸಮಾಡುವ ಪೂರ್ವ ಗಾಳಿಯು ಬರಲು, ಅವನ ಬುಗ್ಗೆಯು ಬತ್ತುವುದು. ಅವನ ಒರತೆಯು ಒಣಗುವುದು. ಅವನ ಬೊಕ್ಕಸಗಳ ನಿಧಿಯನ್ನು ಶತ್ರುಗಳು ಸೂರೆಮಾಡುವರು.</verse>
				<verse number="16">ಸಮಾರ್ಯವು ತನ್ನ ದೇವರಿಗೆ ತಿರುಗಿಬಿದ್ದದರಿಂದ, ತನ್ನ ದೋಷಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು, ವೈರಿಗಳು ಅವಳ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳುವರು.”</verse>
			</chapter>
			<chapter number="14">
				<verse number="1">ಇಸ್ರಾಯೇಲೇ, ನಿನ್ನ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೋ. ಏಕೆಂದರೆ ನಿನ್ನ ಪಾಪಗಳೇ, ನಿನ್ನ ಬೀಳುವಿಕೆಗೆ ಕಾರಣ.</verse>
				<verse number="2">ಮಾತುಗಳನ್ನು ನಿಮ್ಮ ಸಂಗಡ ತೆಗೆದುಕೊಂಡು, ಯೆಹೋವ ದೇವರ ಕಡೆಗೆ ತಿರುಗಿಕೊಂಡು, ಅವರಿಗೆ ಹೇಳಿರಿ: “ನಮ್ಮ ಪಾಪಗಳನ್ನೆಲ್ಲಾ ಕ್ಷಮಿಸಿ, ನಮ್ಮಲ್ಲಿ ಒಳ್ಳೆಯದನ್ನು ಸ್ವೀಕರಿಸಿರಿ. ಆಗ ನಮ್ಮ ಸ್ತೋತ್ರ ಬಲಿಯನ್ನು ನಿಮಗೆ ಅರ್ಪಿಸುವೆವು.</verse>
				<verse number="3">ಅಸ್ಸೀರಿಯ ನಮ್ಮನ್ನು ರಕ್ಷಿಸುವುದಿಲ್ಲ. ನಾವು ಕುದುರೆಗಳ ಮೇಲೆ ಸವಾರಿ ಮಾಡುವುದಿಲ್ಲ. ನಮ್ಮ ಕೈಗಳಿಂದ ಉಂಟು ಮಾಡಿದವುಗಳಿಗೆ, ‘ನೀವು ನಮ್ಮ ದೇವರುಗಳೇ,’ ಎಂದು ನಾವು ಇನ್ನು ಮುಂದೆ ಹೇಳುವುದೇ ಇಲ್ಲ. ಏಕೆಂದರೆ ನಿಮ್ಮಲ್ಲಿ ದಿಕ್ಕಿಲ್ಲದವರಿಗೆ ಅನುಕಂಪ ದೊರೆಯುತ್ತದೆ.”</verse>
				<verse number="4">“ನಾನು ಅವರ ಹಿಂಜಾರುವಿಕೆಯನ್ನು ಸ್ವಸ್ಥ ಮಾಡುವೆನು. ನಾನು ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು. ಏಕೆಂದರೆ ನನ್ನ ಕೋಪವು ಅವರ ಕಡೆಯಿಂದ ತಿರುಗಿಕೊಂಡಿದೆ.</verse>
				<verse number="5">ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು. ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಆಳಕ್ಕೆ ಹರಡುವನು.</verse>
				<verse number="6">ಅವನ ಕೊಂಬೆಗಳು ಹರಡಿಕೊಂಡು, ಅವನ ಸೌಂದರ್ಯವು ಎಣ್ಣೆಮರಗಳ ಹಾಗೆಯೂ ಅವನ ಪರಿಮಳವು ಲೆಬನೋನಿನ ದೇವದಾರಿನ ಹಾಗೆಯೂ ಇರುವುದು.</verse>
				<verse number="7">ಆತನ ನೆರಳಿನಲ್ಲಿ ಜನರು ವಾಸಿಸುವರು, ಧಾನ್ಯದ ಹಾಗೆ ಜೀವಿಸುವರು, ದ್ರಾಕ್ಷಿಬಳ್ಳಿಯ ಹಾಗೆ ಫಲಪ್ರದವಾಗುವರು. ಇಸ್ರಾಯೇಲಿನ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಇರುವುದು.</verse>
				<verse number="8">ಎಫ್ರಾಯೀಮೇ, ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನಿಗೆ ಉತ್ತರಿಸಿದ್ದೇನೆ. ನಾನು ಅವನ ಬಗ್ಗೆ ಕಾಳಜಿ ವಹಿಸುತ್ತೇನೆ. ನಾನು ಹಸಿರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಬರುವುದು.”</verse>
				<verse number="9">ಯಾರು ಬುದ್ಧಿವಂತರು? ಅವರು ಈ ಸತ್ಯಗಳನ್ನು ಅರ್ಥಮಾಡಿಕೊಳ್ಳಲಿ. ಯಾರು ವಿವೇಚನೆಯುಳ್ಳವರು? ಅವರು ಇವುಗಳನ್ನು ತಿಳಿದುಕೊಳ್ಳಲಿ. ಏಕೆಂದರೆ, ಯೆಹೋವ ದೇವರ ಮಾರ್ಗಗಳು ನ್ಯಾಯವಾಗಿವೆ. ನೀತಿವಂತರು ಅದರಲ್ಲಿ ನಡೆಯುವರು. ಆದರೆ ಅಕ್ರಮಗಾರರು ಅವುಗಳಿಂದ ಎಡವಿಬೀಳುವರು.</verse>
			</chapter>
		</book>
		<book number="29">
			<chapter number="1">
				<verse number="1">ಪೆತುಯೇಲನ ಮಗನಾದ ಯೋಯೇಲನಿಗೆ ಬಂದ ಯೆಹೋವ ದೇವರು ವಾಕ್ಯವು:</verse>
				<verse number="2">ಹಿರಿಯರೇ, ಇದನ್ನು ಕೇಳಿರಿ: ದೇಶದ ನಿವಾಸಿಗಳೇ, ಕಿವಿಗೊಡಿರಿ. ಇಂಥ ದುರ್ಘಟನೆಯು ನಿಮ್ಮ ದಿವಸಗಳಲ್ಲಾದರೂ ನಿಮ್ಮ ಪೂರ್ವಿಕರ ದಿವಸಗಳಲ್ಲಾದರೂ ಉಂಟಾಯಿತೋ?</verse>
				<verse number="3">ಇದರ ವಿಷಯವನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ಅವರು ತಮ್ಮ ಮಕ್ಕಳಿಗೆ ತಿಳಿಸಲಿ, ಅವರ ಮಕ್ಕಳೂ ಮತ್ತೊಂದು ತಲಾಂತರಕ್ಕೂ ತಿಳಿಸಲಿ.</verse>
				<verse number="4">ಚೂರಿಮಿಡತೆ ತಿಂದು, ಉಳಿದಿದ್ದ ಬೆಳೆಯನ್ನು ಗುಂಪುಮಿಡತೆ ತಿಂದುಬಿಟ್ಟಿತು. ಗುಂಪುಮಿಡತೆ ತಿಂದು ಬಿಟ್ಟಿದ್ದನ್ನು, ಕುದುರೆಮಿಡತೆ ತಿಂದುಬಿಟ್ಟಿತು. ಕುದುರೆಮಿಡತೆ ಬಿಟ್ಟಿದ್ದನ್ನು ಕಂಬಳಿಮಿಡತೆ ತಿಂದುಬಿಟ್ಟಿತು.</verse>
				<verse number="5">ಅಮಲೇರಿದವರೇ, ಎಚ್ಚೆತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾರಸದ ನಿಮಿತ್ತ ಗೋಳಾಡಿರಿ; ಏಕೆಂದರೆ, ಅದು ನಿಮ್ಮ ಬಾಯಿಗೆ ಇನ್ನು ದೊರಕುವುದಿಲ್ಲ.</verse>
				<verse number="6">ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು. ಅದು ಬಲವಾದದ್ದೂ, ಲೆಕ್ಕವಿಲ್ಲದ್ದೂ; ಅದರ ಕೋರೆಗಳು ಸಿಂಹದ ಹಲ್ಲುಗಳು, ಸಿಂಹಿಣಿಯ ಹಲ್ಲುಗಳು ಅದಕ್ಕೆ ಇವೆ.</verse>
				<verse number="7">ಅದು ನನ್ನ ದ್ರಾಕ್ಷಿಬಳ್ಳಿಯನ್ನು ಹಾಳು ಮಾಡಿ, ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ. ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ. ಅದರ ಕೊಂಬೆಗಳು ಬಿಳುಪಾದವು.</verse>
				<verse number="8">ಯೌವನದ ಗಂಡನಿಗೋಸ್ಕರ ಗೋಣಿತಟ್ಟು ಧರಿಸಿ, ಕನ್ಯೆಯ ಹಾಗೆ ಪ್ರಲಾಪಿಸು.</verse>
				<verse number="9">ಧಾನ್ಯ ಸಮರ್ಪಣೆಯನ್ನಾಗಲಿ ಪಾನಾರ್ಪಣೆಯನ್ನಾಗಲಿ ಯೆಹೋವ ದೇವರ ಆಲಯದಲ್ಲಿ ಅರ್ಪಿಸುವುದಿಲ್ಲ. ಯೆಹೋವ ದೇವರ ಸೇವಕರಾದ ಯಾಜಕರು ಗೋಳಾಡುತ್ತಾರೆ.</verse>
				<verse number="10">ಹೊಲವು ಹಾಳಾಗಿದೆ; ಭೂಮಿಯು ಒಣಗಿದೆ, ಧಾನ್ಯವು ನಾಶವಾಗಿದೆ; ಹೊಸ ದ್ರಾಕ್ಷಾರಸವು ಒಣಗಿದೆ; ಎಣ್ಣೆ ತೀರಿಹೋಗಿದೆ.</verse>
				<verse number="11">ರೈತರೇ, ರೋದಿಸಿರಿ, ತೋಟಗಾರರೇ, ಪರಿತಪಿಸಿರಿ; ಗೋಧಿ ಮತ್ತು ಜವೆಗೋಧಿಗಾಗಿ ದುಃಖಿಸಿ; ಏಕೆಂದರೆ ಹೊಲದ ಬೆಳೆ ನಾಶವಾಗಿದೆ.</verse>
				<verse number="12">ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿ ಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.</verse>
				<verse number="13">ಯಾಜಕರೇ, ಗೋಣಿತಟ್ಟು ಕಟ್ಟಿಕೊಂಡು ಗೋಳಾಡಿರಿ. ಬಲಿಪೀಠದ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟಿನಲ್ಲಿ ರಾತ್ರಿಯೆಲ್ಲಾ ಕಳೆಯಿರಿ. ಏಕೆಂದರೆ, ಧಾನ್ಯ ಸಮರ್ಪಣೆಯೂ ಪಾನಾರ್ಪಣೆಯೂ ನಿಮ್ಮ ದೇವರ ಆಲಯದಿಂದ ನಿಂತುಹೋಗಿವೆ.</verse>
				<verse number="14">ಪವಿತ್ರ ಉಪವಾಸವನ್ನು ಘೋಷಿಸಿರಿ. ಪವಿತ್ರ ಸಭೆಯನ್ನು ಕರೆಯಿರಿ. ಹಿರಿಯರನ್ನೂ ದೇಶದ ನಿವಾಸಿಗಳೆಲ್ಲರನ್ನೂ ನಿಮ್ಮ ಯೆಹೋವ ದೇವರ ಆಲಯದಲ್ಲಿ ಕೂಡಿಸಿ, ಯೆಹೋವ ದೇವರಿಗೆ ಮೊರೆಯಿಡಿರಿ.</verse>
				<verse number="15">ಆ ದಿನ ಭಯಂಕರವಾದದ್ದು! ಏಕೆಂದರೆ ಯೆಹೋವ ದೇವರ ದಿವಸವು ಸಮೀಪವಾಗಿದೆ. ಸರ್ವಶಕ್ತರ ಕಡೆಯಿಂದ ಇದು ನಾಶವಾದಂತೆ ಬರುವುದು.</verse>
				<verse number="16">ನಮ್ಮ ಕಣ್ಣೆದುರೇ ಆಹಾರವು ಹಾಳಾಯಿತಲ್ಲಾ. ಸಂತೋಷವೂ ಉಲ್ಲಾಸವೂ ನಮ್ಮ ದೇವರ ಆಲಯವನ್ನು ಬಿಟ್ಟುಹೋಯಿತಲ್ಲವೇ?</verse>
				<verse number="17">ಬೀಜಗಳು ಹೆಂಟೆಗಳ ಕೆಳಗೆ ಕೆಟ್ಟು ಹೋಗಿವೆ. ಉಗ್ರಾಣಗಳು ನಾಶವಾಗಿವೆ. ಕಣಜಗಳು ಕುಸಿದುಬಿದ್ದಿವೆ. ಏಕೆಂದರೆ ಧಾನ್ಯವು ಒಣಗಿದೆ.</verse>
				<verse number="18">ಪಶುಗಳು ನರಳುತ್ತವೆ. ದನದ ಹಿಂಡುಗಳು ಕಳವಳಗೊಂಡಿವೆ. ಏಕೆಂದರೆ ಅವುಗಳಿಗೆ ಮೇವು ಇಲ್ಲ; ಕುರಿಮಂದೆಗಳು ಸಹ ಕಷ್ಟಪಡುತ್ತಲಿವೆ.</verse>
				<verse number="19">ಯೆಹೋವ ದೇವರೇ, ನಿಮಗೆ ಮೊರೆಯಿಡುತ್ತೇನೆ. ಬೆಂಕಿಯು ಹುಲ್ಲುಗಾವಲನ್ನು ದಹಿಸಿಬಿಟ್ಟಿದೆ; ಜ್ವಾಲೆಯು ಅಡವಿಯ ಮರಗಳನ್ನೆಲ್ಲಾ ಸುಟ್ಟುಬಿಟ್ಟಿವೆ.</verse>
				<verse number="20">ಕಾಡುಮೃಗಗಳು ಸಹ ನಿನ್ನ ಕಡೆಗೆ ತಲೆಯೆತ್ತಿವೆ. ನೀರಿನ ಹೊಳೆಗಳು ಬತ್ತಿ ಹೋಗಿವೆ. ಹುಲ್ಲುಗಾವಲನ್ನು ಬೆಂಕಿಯು ದಹಿಸಿಬಿಟ್ಟಿದೆ.</verse>
			</chapter>
			<chapter number="2">
				<verse number="1">ನೀವು ಚೀಯೋನಿನಲ್ಲಿ ಕೊಂಬು ಊದಿರಿ. ನನ್ನ ಪರಿಶುದ್ಧ ಪರ್ವತದಲ್ಲಿ ಆರ್ಭಟಿಸಿರಿ. ದೇಶದ ನಿವಾಸಿಗಳೆಲ್ಲರು ನಡುಗಲಿ. ಏಕೆಂದರೆ ಯೆಹೋವ ದೇವರ ದಿವಸವು ಬರುತ್ತದೆ. ಅದು ಸಮೀಪವಾಗಿದೆ.</verse>
				<verse number="2">ಅದು ಕತ್ತಲೆಯೂ ಮಬ್ಬೂ ಉಳ್ಳ ದಿವಸವೂ, ಮೇಘವೂ ಕಾರ್ಗತ್ತಲು ಉಳ್ಳ ದಿವಸವೂ ಆಗಿದೆ. ಬೆಟ್ಟಗಳ ಮೇಲೆ ಹರಡುವ ಉದಯದ ಹಾಗೆ ದೊಡ್ಡ ಬಲವಾದ ಸ್ಯೆನ್ಯವು ಬರುತ್ತದೆ. ಅದು ಪ್ರಾಚೀನ ಕಾಲದಲ್ಲಿ ಮತ್ತು ಮುಂದಿನ ಯುಗಗಳಲ್ಲಿ ಎಂದಿಗೂ ಇರುವುದಿಲ್ಲ.</verse>
				<verse number="3">ಅವುಗಳ ಮುಂದೆ ಬೆಂಕಿ ದಹಿಸುತ್ತದೆ. ಅವುಗಳ ಹಿಂದೆ ಜ್ವಾಲೆ ಧಗಧಗಿಸುತ್ತದೆ. ಅವುಗಳ ಮುಂದೆ ದೇಶವು ಏದೆನ್ ತೋಟದ ಹಾಗಿದೆ. ಅವುಗಳ ಹಿಂದೆ ಕಾಡು ಹಾಳಾಗಿದೆ. ಯಾವುದೂ ಅವುಗಳಿಂದ ತಪ್ಪಿಸಿಕೊಳ್ಳುವುದಿಲ್ಲ.</verse>
				<verse number="4">ಅವುಗಳ ಆಕಾರವು ಕುದುರೆಗಳ ಆಕಾರದ ಹಾಗಿದೆ. ಸವಾರರ ಹಾಗೆಯೇ ಓಡುತ್ತವೆ.</verse>
				<verse number="5">ರಥಗಳ ಶಬ್ದದಂತೆ ಅವು ಪರ್ವತಗಳ ತುದಿಗಳಲ್ಲಿ ಹಾರುತ್ತವೆ. ಸಿಡಿಯುವ ಬೆಂಕಿಯು ದಹಿಸುವ ಕೋಲಿನಂತೆ, ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.</verse>
				<verse number="6">ಅವುಗಳ ಮುಂದೆ ಜನಾಂಗಗಳು ಬಹಳವಾಗಿ ನೊಂದುಕೊಳ್ಳುತ್ತವೆ. ಎಲ್ಲಾ ಮುಖಗಳು ಕಳೆಗುಂದುತ್ತವೆ.</verse>
				<verse number="7">ಶೂರರ ಹಾಗೆ ಓಡುತ್ತವೆ. ಯುದ್ಧಶಾಲಿಗಳ ಹಾಗೆ ಗೋಡೆ ಏರುತ್ತವೆ. ಅವೆಲ್ಲಾ ಸಾಲಾಗಿ ಮುನ್ನಡೆಯುತ್ತವೆ. ತಮ್ಮ ಹಾದಿಗಳನ್ನು ಬದಲು ಮಾಡುವುದಿಲ್ಲ.</verse>
				<verse number="8">ಒಂದು ಇನ್ನೊಂದನ್ನು ನೂಕುವುದಿಲ್ಲ. ಅವುಗಳಲ್ಲಿ ಪ್ರತಿಯೊಂದು ತನ್ನ ತನ್ನ ದಾರಿಯಲ್ಲಿ ಮುನ್ನಡೆಯುತ್ತವೆ. ತಮ್ಮ ಸ್ಥಾನಗಳನ್ನು ಬಿಟ್ಟುಕೊಡದೆ ಯುದ್ಧ ಮಾಡುತ್ತವೆ.</verse>
				<verse number="9">ಪಟ್ಟಣದಲ್ಲಿ ಅತ್ತಿತ್ತ ತಿರುಗಾಡುತ್ತವೆ. ಗೋಡೆಯ ಮೇಲೆ ಓಡುತ್ತವೆ. ಅವು ಮನೆಗಳನ್ನು ಹತ್ತಿ, ಕಳ್ಳನ ಹಾಗೆ ಕಿಟಿಕಿಗಳಿಂದ ಪ್ರವೇಶಿಸುತ್ತವೆ.</verse>
				<verse number="10">ಅವುಗಳ ಮುಂದೆ ಭೂಮಿಯು ನಡುಗುತ್ತದೆ. ಆಕಾಶಗಳು ಅದರುತ್ತವೆ. ಸೂರ್ಯ ಚಂದ್ರರು ಕಪ್ಪಾಗುತ್ತವೆ. ನಕ್ಷತ್ರಗಳು ಇನ್ನು ಮುಂದೆ ಹೊಳೆಯುವುದಿಲ್ಲ.</verse>
				<verse number="11">ಯೆಹೋವ ದೇವರು ತಮ್ಮ ಸೈನ್ಯಕ್ಕೆ ಗುಡುಗಿನಂತೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ಬಹು ದೊಡ್ಡದಾಗಿದೆ. ಅವರ ಆಜ್ಞೆಯನ್ನು ಪಾಲಿಸುವವನು ಪರಾಕ್ರಮಿಯು. ಯೆಹೋವ ದೇವರ ದಿವಸವು ದೊಡ್ಡದು, ಮಹಾ ಭಯಂಕರವಾದದ್ದು. ಅದನ್ನು ಸಹಿಸಿಕೊಳ್ಳುವವರು ಯಾರು?</verse>
				<verse number="12">ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಈಗಲಾದರೂ ಉಪವಾಸದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದಲೂ ನಿಮ್ಮ ಪೂರ್ಣಹೃದಯದಿಂದ ನನ್ನ ಕಡೆಗೆ ತಿರುಗಿಕೊಳ್ಳಿರಿ.”</verse>
				<verse number="13">ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು, ನಿಮ್ಮ ದೇವರಾದ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳಿರಿ. ಅವರು ದಯೆಯೂ ಕರುಣೆಯೂ, ದೀರ್ಘಶಾಂತಿಯೂ ಮಹಾ ಪ್ರೀತಿಯೂ ಉಳ್ಳವರಾಗಿ ಮಾಡಬೇಕೆಂದಿರುವ ಕೇಡಿಗೆ ಮನಮರುಗುತ್ತಾರೆ.</verse>
				<verse number="14">ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು. ನಿಮ್ಮ ಯೆಹೋವ ದೇವರಿಗೆ ಅರ್ಪಿಸಲು ಬೇಕಾದ ಧಾನ್ಯ ಸಮರ್ಪಣೆ ಹಾಗು ಪಾನಾರ್ಪಣೆಯನ್ನು ನಿಮಗೆ ಧಾರಾಳವಾಗಿ ಉಳಿಸಬಹುದು, ಯಾರಿಗೆ ಗೊತ್ತು?</verse>
				<verse number="15">ಚೀಯೋನಿನಲ್ಲಿ ಕೊಂಬು ಊದಿರಿ; ಪವಿತ್ರ ಉಪವಾಸವನ್ನು ಸಾರಿರಿ; ಪವಿತ್ರ ಸಭೆಯನ್ನು ಕರೆಯಿರಿ.</verse>
				<verse number="16">ಜನರನ್ನು ಕೂಡಿಸಿರಿ; ಸಭೆಯನ್ನು ಪವಿತ್ರಗೊಳಿಸಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಹಸುಗೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳಗಿಂದಲೂ ಮದುಮಗಳು ತನ್ನ ಕೊಠಡಿಯೊಳಗಿಂದಲೂ ಹೊರಡಲಿ.</verse>
				<verse number="17">ಯೆಹೋವ ದೇವರ ಸಮ್ಮುಖ ಸೇವಕರಾದ ಯಾಜಕರು, ಅಂಗಳಕ್ಕೂ, ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ, “ಯೆಹೋವ ದೇವರೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡಿರಿ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು?”</verse>
				<verse number="18">ಆಗ ಯೆಹೋವ ದೇವರು ತಮ್ಮ ದೇಶಕ್ಕೋಸ್ಕರ ಅಭಿಮಾನಗೊಂಡು, ತಮ್ಮ ಜನರನ್ನು ಕನಿಕರಿಸುವರು.</verse>
				<verse number="19">ಯೆಹೋವ ದೇವರು ತನ್ನ ಜನರಿಗೆ ಉತ್ತರಕೊಟ್ಟು, ನಾನು ನಿಮಗೆ ಧಾನ್ಯವನ್ನೂ, ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ನಿಮಗೆ ಸಾಕಾಗುವಷ್ಟು ಕಳುಹಿಸಿ, ನಿಮ್ಮನ್ನು ಇನ್ನು ಮೇಲೆ ಜನಾಂಗಗಳಲ್ಲಿ ನಿಂದಿತರಾಗಿ ಇಡುವುದಿಲ್ಲ.</verse>
				<verse number="20">“ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮಿಂದ ದೂರಮಾಡಿ, ಅದನ್ನು ಹಾಳುಬಿದ್ದ ಬಂಜರು ಭೂಮಿಗೂ, ಅದರ ಮುಂಭಾಗವನ್ನು ಪೂರ್ವದ ಉಪ್ಪು ಸಮುದ್ರಕ್ಕೂ ಅದರ ಹಿಂಭಾಗವನ್ನು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೂ ಓಡಿಸಿಬಿಡುವೆನು. ಅದರ ದುರ್ವಾಸನೆಯು ಏರುವುದು. ಅದು ಗಬ್ಬು ನಾರುವುದು.” ಏಕೆಂದರೆ, ಆತನು ಮಹಾಕಾರ್ಯಗಳನ್ನು ಮಾಡಿದ್ದಾರೆ.</verse>
				<verse number="21">ಯಹೂದ ದೇಶವೇ, ಭಯಪಡಬೇಡ; ಉಲ್ಲಾಸಿಸಿ, ಸಂತೋಷವಾಗಿರು. ಏಕೆಂದರೆ, ಯೆಹೋವ ದೇವರು ಮಹತ್ತಾದವುಗಳನ್ನು ಮಾಡಿದ್ದಾರೆ.</verse>
				<verse number="22">ಕಾಡುಮೃಗಗಳೇ, ಭಯಪಡಬೇಡಿರಿ. ಏಕೆಂದರೆ, ಅಡವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ. ಮರಗಳು ತಮ್ಮ ಫಲವನ್ನು ಫಲಿಸುತ್ತವೆ. ಅಂಜೂರದ ಗಿಡವೂ ದ್ರಾಕ್ಷಿ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.</verse>
				<verse number="23">ಚೀಯೋನಿನ ಜನರೇ, ನಿಮ್ಮ ದೇವರಾದ ಯೆಹೋವ ದೇವರಲ್ಲಿ ಉಲ್ಲಾಸಿಸಿರಿ, ಸಂತೋಷವಾಗಿರಿ. ಏಕೆಂದರೆ ನಿಮಗೆ ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನ ಹಾಗೆ ನಿಮಗೆ ಸುರಿಸುವರು.</verse>
				<verse number="24">ಕಣಗಳು ಧಾನ್ಯದಿಂದ ತುಂಬುವುವು. ತೊಟ್ಟಿಗಳು ದ್ರಾಕ್ಷಾರಸದಿಂದಲೂ ಎಣ್ಣೆಯಿಂದಲೂ ತುಂಬಿ ತುಳುಕುವುವು.</verse>
				<verse number="25">“ನಾನು ನಿಮ್ಮಲ್ಲಿ ಕಳುಹಿಸಿದಂಥ ನನ್ನ ದೊಡ್ಡ ಸೈನ್ಯವಾದ ಮಿಡತೆಗಳು, ಗುಂಪು ಮಿಡತೆಗಳು, ಕಂಬಳಿ ಮಿಡತೆಗಳು, ಚೂರಿ ಮಿಡತೆಗಳು ತಿಂದು ಬಿಟ್ಟ ವರ್ಷಗಳನ್ನು ನಿಮಗೆ ಪುನಃಸ್ಥಾಪಿಸಿ ಕೊಡುವೆನು.</verse>
				<verse number="26">ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು, ನಿಮ್ಮನ್ನು ಅದ್ಭುತವಾಗಿ ನಡೆಸಿದ ನಿಮ್ಮ ದೇವರಾದ ಯೆಹೋವ ದೇವರ ಹೆಸರನ್ನು ಸ್ತುತಿಸುವಿರಿ. ನನ್ನ ಜನರು ಎಂದೆಂದಿಗೂ ನಾಚಿಕೆಪಡರು.</verse>
				<verse number="27">ನಾನೇ ಇಸ್ರಾಯೇಲಿನ ಮಧ್ಯೆ ನೆಲೆಯಾಗಿ ಇರುವವನು. ನಾನೇ ನಿಮ್ಮ ಯೆಹೋವ ದೇವರು, ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರು ಎಂದಿಗೂ ನಾಚಿಕೆಪಡರು.</verse>
				<verse number="28">“ಆಮೇಲೆ ನಾನು, ನನ್ನ ಆತ್ಮನನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು. ನಿಮ್ಮ ಯುವಜನರಿಗೆ ದರ್ಶನಗಳಾಗುವವು.</verse>
				<verse number="29">ಆ ದಿನಗಳಲ್ಲಿ, ನನ್ನ ದಾಸ ದಾಸಿಯರ ಮೇಲೆ, ನನ್ನ ಆತ್ಮವನ್ನು ಸುರಿಸುವೆನು.</verse>
				<verse number="30">ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು, ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು.</verse>
				<verse number="31">ಯೆಹೋವ ದೇವರ ಭಯಂಕರವಾದ ಮಹಾದಿನವು ಬರುವುದಕ್ಕಿಂತ ಮೊದಲು, ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.</verse>
				<verse number="32">ಯೆಹೋವ ದೇವರ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು. ಏಕೆಂದರೆ ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಅನೇಕರಿಗೆ ಮುಕ್ತಿ ದೊರಕುವುದು. ಯೆಹೋವ ದೇವರು ಹೇಳಿದ ಪ್ರಕಾರ ಯೆಹೋವ ದೇವರ ಕರೆಹೊಂದಿ ಉಳಿದವರಲ್ಲಿಯೂ ಬಿಡುಗಡೆ ಇರುವುದು.</verse>
			</chapter>
			<chapter number="3">
				<verse number="1">“ಆ ದಿವಸಗಳಲ್ಲಿಯೂ, ಆ ಸಮಯದಲ್ಲಿಯೂ ನಾನು ಯೆಹೂದ ಮತ್ತು ಯೆರೂಸಲೇಮಿನ ಸಿರಿಸಂಪತ್ತನ್ನು ಪುನಃ ಸ್ಥಾಪಿಸುವಾಗ,</verse>
				<verse number="2">ನಾನು ಎಲ್ಲಾ ಜನಾಂಗಗಳನ್ನು ಕೂಡಿಸುವೆನು. ಯೆಹೋಷಾಫಾಟನ ತಗ್ಗಿಗೆ ಅವರನ್ನು ತರುವೆನು. ಅಲ್ಲಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯವಾಗಿ ಅವರ ಸಂಗಡ ವ್ಯಾಜ್ಯವಾಡುವೆನು. ಅವರು ಅವರನ್ನು ಜನಾಂಗಗಳಲ್ಲಿ ಚದುರಿಸಿ, ನನ್ನ ದೇಶವನ್ನು ಹಂಚಿಕೊಂಡರು.</verse>
				<verse number="3">ನನ್ನ ಜನರಿಗೋಸ್ಕರ ಚೀಟುಹಾಕಿ, ಬಾಲಕರನ್ನು ವೇಶ್ಯಾ ವೃತ್ತಿಗೆ ಕೊಟ್ಟು, ಬಾಲಕಿಯರನ್ನು ಕುಡಿಯುವ ದ್ರಾಕ್ಷಾರಸಕ್ಕಾಗಿ ಮಾರಿದ್ದಾರೆ.</verse>
				<verse number="4">“ಟೈರೇ, ಸೀದೋನೇ, ಫಿಲಿಷ್ಟಿಯದ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರೋಧವಾಗಿ ನಿಮಗೆ ಏನು ಇದೆ? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ಮುಯ್ಯಿ ನನಗೆ ಸಲ್ಲಿಸಿದರೆ, ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.</verse>
				<verse number="5">ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ, ನನ್ನ ಅತ್ಯುತ್ತಮ ಸಂಪತ್ತನ್ನೂ ನಿಮ್ಮ ದೇವಸ್ಥಾನಗಳಿಗೆ ತೆಗೆದುಕೊಂಡು ಹೋಗಿದ್ದಿರಿ.</verse>
				<verse number="6">ಯೆಹೂದದ ಹಾಗೂ ಯೆರೂಸಲೇಮಿನ ಜನರನ್ನು ಅವರ ಪ್ರಾಂತಗಳಿಂದ ದೂರ ಮಾಡುವುದಕ್ಕಾಗಿ ಗ್ರೀಕರಿಗೆ ಮಾರಿದ್ದೀರಿ.</verse>
				<verse number="7">“ಇಗೋ, ಎಲ್ಲಿ ಅವರನ್ನು ಮಾರಿದಿರೋ, ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ, ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿತೀರಿಸುವೆನು.</verse>
				<verse number="8">ನಿಮ್ಮ ಪುತ್ರರನ್ನೂ ನಿಮ್ಮ ಪುತ್ರಿಯರನ್ನೂ ಯೆಹೂದದ ಜನರಿಗೆ ಮಾರುವೆನು. ಇವರು ಅವರನ್ನು ದೂರ ಜನವಾದ ಶೆಬದವರಿಗೆ ಮಾರುವರು.” ಯೆಹೋವ ದೇವರು ಇದನ್ನು ಹೇಳಿದ್ದಾರೆ.</verse>
				<verse number="9">ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧಕ್ಕೆ ಇದನ್ನು ಸಿದ್ಧಮಾಡಿರಿ; ಶೂರರನ್ನು ಎಬ್ಬಿಸಿರಿ; ಯುದ್ಧಭಟರೆಲ್ಲರು ಸಮೀಪಿಸಿ ಬರಲಿ.</verse>
				<verse number="10">ನಿಮ್ಮ ನೇಗಿಲುಗಳ ಗುಳಗಳನ್ನು ಖಡ್ಗಗಳನ್ನಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳನ್ನಾಗಿಯೂ ಬಡಿಯಿರಿ ಬಲಹೀನನು ಸಹ ನಾನು ಶಕ್ತಿವಂತನು ಎಂದು ಹೇಳಲಿ.</verse>
				<verse number="11">ಸುತ್ತಲಿನ ಎಲ್ಲಾ ರಾಷ್ಟ್ರಗಳೇ, ಸಭೆಯಾಗಿ ಕೂಡಿಕೊಳ್ಳಿರಿ. ಯೆಹೋವ ದೇವರೇ, ನಿನ್ನ ಶೂರರನ್ನು ಕೆಳಗೆ ಇಳಿಸಿರಿ.</verse>
				<verse number="12">ಜನಾಂಗಗಳು ಎಚ್ಚೆತ್ತು ಯೆಹೋಷಾಫಾಟನ ಕಣಿವೆಗೆ ಇಳಿಯಲಿ. ಸುತ್ತಮುತ್ತ ನೆರೆದಿರುವ ಜನಾಂಗಗಳಿಗೆ ನ್ಯಾಯತೀರಿಸಲು ಅಲ್ಲಿ ನಾನು ಆಸೀನನಾಗಿರುವೆನು.</verse>
				<verse number="13">ಕುಡುಗೋಲನ್ನು ಹಾಕಿರಿ. ಏಕೆಂದರೆ ಬೆಳೆ ಪಕ್ವವಾಯಿತು. ಬಂದು ಇಳಿಯಿರಿ. ಏಕೆಂದರೆ ದ್ರಾಕ್ಷಿಯ ಆಲೆ ತುಂಬಿ ಇದೆ. ತೊಟ್ಟಿಗಳು ತುಳುಕುವಂತೆ ಅವರ ಕೆಟ್ಟತನವು ಬಹಳವಾಗಿದೆ.</verse>
				<verse number="14">ತೀರ್ಮಾನದ ಕಣಿವೆಯಲ್ಲಿ ಗುಂಪು ಗುಂಪುಗಳಾಗಿ ಜನರಿದ್ದಾರೆ! ಏಕೆಂದರೆ ಯೆಹೋವ ದೇವರ ದಿವಸವು ನಿರ್ಣಯದ ತಗ್ಗಿನಲ್ಲಿ ಸಮೀಪವಾಗಿದೆ.</verse>
				<verse number="15">ಸೂರ್ಯ, ಚಂದ್ರರು ಕಪ್ಪಾಗುವುವು. ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವುವು.</verse>
				<verse number="16">ಯೆಹೋವ ದೇವರು ಚೀಯೋನಿನೊಳಗಿಂದ ಗರ್ಜಿಸಿ, ಯೆರೂಸಲೇಮಿನೊಳಗಿಂದ ಗುಡುಗುವರು. ಆಕಾಶಗಳೂ ಭೂಮಿಯೂ ನಡುಗುವುವು. ಆದರೆ ಯೆಹೋವ ದೇವರು ತಮ್ಮ ಜನರಿಗೆ ಆಶ್ರಯವೂ, ಇಸ್ರಾಯೇಲರಿಗೆ ರಕ್ಷಣೆಯ ದುರ್ಗವೂ ಆಗಿರುವರು.</verse>
				<verse number="17">ಆಗ ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ವಾಸಿಸುವ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ ಎಂದು ನೀವು ತಿಳಿದುಕೊಳ್ಳುವಿರಿ. ಯೆರೂಸಲೇಮು ಪರಿಶುದ್ಧವಾಗಿರುವುದು. ವಿದೇಶಿಯರು ಅದನ್ನೆಂದಿಗೂ ಆಕ್ರಮಿಸರು.</verse>
				<verse number="18">ಆ ದಿವಸದಲ್ಲಿ ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವುವು. ಗುಡ್ಡಗಳು ಹಾಲಿನಿಂದ ಹರಿಯುವುವು. ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವುವು. ಯೆಹೋವ ದೇವರ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ಕಣಿವೆಗೆ ಜಲ ಕೊಡುವುದು.</verse>
				<verse number="19">ಈಜಿಪ್ಟ್ ಹಾಳಾಗುವುದು. ಎದೋಮು ಹಾಳಾದ ಮರುಭೂಮಿಯಾಗುವುದು. ಏಕೆಂದರೆ ಅವರು ಯೆಹೂದದ ಜನರನ್ನು ಬಲಾತ್ಕಾರ ಮಾಡಿ, ತಮ್ಮ ದೇಶದಲ್ಲಿ ಅಪರಾಧವಿಲ್ಲದ ರಕ್ತವನ್ನು ಚೆಲ್ಲಿದರು.</verse>
				<verse number="20">ಯೆಹೂದವು ಎಂದೆಂದಿಗೂ ಜನಭರಿತವಾಗುವುದು. ಯೆರೂಸಲೇಮು ಸಹ ತಲತಲಾಂತರಕ್ಕೂ ನಿಲ್ಲುವುದು.</verse>
				<verse number="21">ನಾನು ಅವರ ಮುಗ್ಧ ರಕ್ತಕ್ಕೆ ಪ್ರತೀಕಾರ ತೀರಿಸದೆ ಬಿಡಬೇಕೇ? ಇಲ್ಲ, ನಾನು ಎಂದಿಗೂ ಬಿಡುವುದಿಲ್ಲ. ಯೆಹೋವ ದೇವರು ಚೀಯೋನಿನಲ್ಲಿ ವಾಸವಾಗಿರುತ್ತಾರೆ.</verse>
			</chapter>
		</book>
		<book number="30">
			<chapter number="1">
				<verse number="1">ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿಯೂ ಇಸ್ರಾಯೇಲಿನ ಅರಸನಾದ ಯೋವಾಷನ ಮಗ ಯಾರೊಬ್ಬಾಮನ ದಿವಸಗಳಲ್ಲಿಯೂ ಭೂಕಂಪಕ್ಕೆ ಎರಡು ವರ್ಷಗಳ ಮುಂಚೆ ಇಸ್ರಾಯೇಲಿನ ವಿಷಯವಾಗಿ ಕಂಡ ದರ್ಶನಗಳು.</verse>
				<verse number="2">ಆಮೋಸನು ಹೇಳಿದ್ದೇನೆಂದರೆ: “ಯೆಹೋವ ದೇವರು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ತಮ್ಮ ಧ್ವನಿ ಗೈಯುವರು. ಕುರುಬರ ಹುಲ್ಲುಗಾವಲುಗಳು ಬಾಡಿ ಹೋಗುತ್ತಿವೆ, ಕರ್ಮೆಲಿನ ತುದಿಯ ಗಿಡಗಳು ಒಣಗಿ ಹೋಗುತ್ತವೆ.”</verse>
				<verse number="3">ಯೆಹೋವ ದೇವರು ಹೀಗೆ ಹೇಳುತ್ತಾರೆ: ದಮಸ್ಕದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ, ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.</verse>
				<verse number="4">ಆದರೆ ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಬೆನ್ಹದದನ ಕೋಟೆಗಳನ್ನು ದಹಿಸಿಬಿಡುವುದು.</verse>
				<verse number="5">ನಾನು ದಮಸ್ಕದ ಹೆಬ್ಬಾಗಿಲನ್ನು ಸಹ ಮುರಿಯುವೆನು. ಆವೆನಿನ ಕಣಿವೆಯಿಂದ ನಿವಾಸಿಯನ್ನು ಮತ್ತು ಬೇತ್ ಏದೆನಿನ ಮನೆಯಿಂದ ರಾಜದಂಡ ಹಿಡಿಯುವವನನ್ನೂ ಕಡಿದುಬಿಡುವೆನು. ಅರಾಮ್ ಜನರು ಸೆರೆಯಾಗಿ ಕೀರಿಗೆ ಹೋಗುವರು, ಇದು ಯೆಹೋವ ದೇವರ ನುಡಿ.</verse>
				<verse number="6">ಯೆಹೋವ ದೇವರು ಹೀಗೆ ಹೇಳುತ್ತಾರೆ: “ಗಾಜದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಎಲ್ಲಾ ಸಮುದಾಯಗಳನ್ನು ಸೆರೆಹಿಡಿದು ಎದೋಮಿಗೆ ಮಾರಿಬಿಟ್ಟರು.</verse>
				<verse number="7">ನಾನು ಗಾಜದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವರ ಕೋಟೆಗಳನ್ನು ದಹಿಸಿಬಿಡುವುದು.</verse>
				<verse number="8">ಅಷ್ಡೋದಿನಿಂದ ನಿವಾಸಿಯನ್ನು ಮತ್ತು ಅಷ್ಕೆಲೋನಿನಿಂದ ರಾಜದಂಡ ಹಿಡಿಯುವವನನ್ನು ನಾಶಮಾಡುವೆನು. ಫಿಲಿಷ್ಟಿಯರಲ್ಲಿ ಕೊನೆಯವರು ಸಾಯುವವರೆಗೂ ನಾನು ಎಕ್ರೋನಿನ ವಿರುದ್ಧ ನನ್ನ ಕೈಯನ್ನು ತಿರುಗಿಸುವೆನು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="9">ಯೆಹೋವ ದೇವರು ಹೀಗೆ ಹೇಳುತ್ತಾರೆ: “ಟೈರ್ ಪಟ್ಟಣದ ಜನರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಸಹೋದರರ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳದೆ ಸೆರೆಯಾಳುಗಳ ಸಂಪೂರ್ಣ ಸಮುದಾಯಗಳನ್ನು ಎದೋಮಿಗೆ ಮಾರಿಬಿಟ್ಟರು.</verse>
				<verse number="10">ಆದರೆ ನಾನು ಟೈರ್ ಪಟ್ಟಣದ ಗೋಡೆಯ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅಲ್ಲಿಯ ಕೋಟೆಗಳನ್ನು ದಹಿಸಿಬಿಡುವುದು.”</verse>
				<verse number="11">ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎದೋಮಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ತನ್ನ ಸಹೋದರನನ್ನು ಖಡ್ಗವನ್ನು ಹಿಂಬಾಲಿಸಿದನು. ಮತ್ತು ದೇಶದ ಸ್ತ್ರೀಯರನ್ನು ಕೊಂದುಹಾಕಿದನು. ಏಕೆಂದರೆ ಅವನ ಕೋಪವು ನಿರಂತರವಾಗಿ ಹರಿಯುತ್ತಿತ್ತು. ಆತನು ರೌದ್ರವನ್ನು ನಿತ್ಯವಾಗಿ ಇಟ್ಟುಕೊಂಡನು.</verse>
				<verse number="12">ಆದರೆ ನಾನು ತೇಮಾನಿನ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಬೊಚ್ರದ ಕೋಟೆಗಳನ್ನು ದಹಿಸಿಬಿಡುವುದು.”</verse>
				<verse number="13">ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅಮ್ಮೋನಿನ ಮಕ್ಕಳು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ತಮ್ಮ ಮೇರೆಯನ್ನು ವಿಸ್ತಾರ ಮಾಡುವುದಕ್ಕಾಗಿ, ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿಬಿಟ್ಟಿದ್ದಾರೆ.</verse>
				<verse number="14">ನಾನು ರಬ್ಬದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಗಳನ್ನು ದಹಿಸಿಬಿಡುವುದು. ಆಗ ಯುದ್ಧಾರ್ಭಟವೂ, ಚಂಡಮಾರುತದಂಥ ಪ್ರಚಂಡ ಕಾದಾಟವೂ ಉಂಟಾಗುವುವು.</verse>
				<verse number="15">ಅವರ ಅರಸನು ತನ್ನ ರಾಜ್ಯಾಧಿಕಾರರ ಸಂಗಡ ಸೆರೆಗೆ ಹೋಗುವನು” ಎಂದು ಯೆಹೋವ ದೇವರು ಹೇಳುತ್ತಾರೆ.</verse>
			</chapter>
			<chapter number="2">
				<verse number="1">ಯೆಹೋವ ದೇವರು ಹೀಗೆ ಹೇಳುತ್ತಾನೆ: “ಮೋವಾಬಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವನು ಎದೋಮಿನ ಅರಸನ ಎಲುಬುಗಳನ್ನು, ಸುಟ್ಟು ಸುಣ್ಣ ಮಾಡಿದ್ದಾನೆ.</verse>
				<verse number="2">ನಾನು ಮೋವಾಬಿನ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಕೆರೀಯೋತಿನ ಕೋಟೆಗಳನ್ನು ದಹಿಸಿಬಿಡುವುದು. ಮೋವಾಬು ಆರ್ಭಟದ ಮತ್ತು ತುತೂರಿಯ ಧ್ವನಿಯ ಸಂಗಡ ಗಲಿಬಿಲಿಯಲ್ಲಿ ಸಾಯುವುದು.</verse>
				<verse number="3">ನಾನು ಅದರ ಮಧ್ಯದಿಂದ ನ್ಯಾಯಾಧಿಪತಿಯನ್ನು ಕಡಿದುಹಾಕುವೆನು. ಎಲ್ಲಾ ಪ್ರಧಾನರನ್ನು ಅಲ್ಲಿ ಅವನೊಂದಿಗೆ ಕೊಲ್ಲುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="4">ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದದವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ಯೆಹೋವ ದೇವರ ನಿಯಮವನ್ನು ನಿರಾಕರಿಸಿದರು. ಆತನ ಆಜ್ಞೆಗಳನ್ನು ಕೈಗೊಳ್ಳಲಿಲ್ಲ. ಅವರ ಪಿತೃಗಳು ಅನುಸರಿಸಿದ ಸುಳ್ಳು ದೇವರುಗಳೇ, ಇವರನ್ನು ದಾರಿ ತಪ್ಪುವವರನ್ನಾಗಿ ಮಾಡಿವೆ.</verse>
				<verse number="5">ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.”</verse>
				<verse number="6">ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿನವರು ಮಾಡಿರುವ ಮೂರು ಹೌದು ನಾಲ್ಕು ಪಾಪಗಳಿಗಾಗಿ, ಆಗಬೇಕಾದ ದಂಡನೆಯನ್ನು ನಾನು ತಪ್ಪಿಸುವುದೇ ಇಲ್ಲ. ಏಕೆಂದರೆ ಅವರು ನಿರಪರಾಧಿಗಳನ್ನು ಬೆಳ್ಳಿಗೆ ಮತ್ತು ಬಡವರನ್ನು ಒಂದು ಜೋಡಿ ಕೆರಗಳಿಗೆ ಮಾರಿದರು.</verse>
				<verse number="7">ಬಡವರ ತಲೆಗಳನ್ನು ಬೀದಿಯ ಧೂಳಿನಂತೆ ತುಳಿದು ಬಿಡುತ್ತಾರೆ. ದೀನದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತಾರೆ. ತಂದೆಯೂ ಮಗನೂ ಒಬ್ಬ ಮಹಿಳೆಯನ್ನು ಇಟ್ಟುಕೊಂಡು, ನನ್ನ ಪವಿತ್ರ ನಾಮಕ್ಕೆ ಅಪಕೀರ್ತಿ ತರುತ್ತಾರೆ.</verse>
				<verse number="8">ಅವರು ಅಡವು ಇಟ್ಟ ವಸ್ತ್ರಗಳ ಮೇಲೆ ಪ್ರತಿಯೊಂದು ಬಲಿಪೀಠಗಳ ಬಳಿಯಲ್ಲೂ ಮಲಗುತ್ತಾರೆ. ನಿಷೇಧಿಸಿದ ದ್ರಾಕ್ಷಾರಸವನ್ನು ತಮ್ಮ ದೇವರ ಆಲಯದಲ್ಲಿ ಕುಡಿಯುತ್ತಾರೆ.</verse>
				<verse number="9">“ಆದರೂ ನನ್ನ ಜನರೇ, ದೇವದಾರು ಮರದಂತೆ ಎತ್ತರವಾಗಿ, ಅಲ್ಲೋನ್ ಮರದಂತೆ ಬಲಿಷ್ಠರಾಗಿ ಇದ್ದ, ಅಮೋರಿಯರನ್ನು ನಾನು ನಾಶ ಪಡಿಸಿದೆನು. ನಾನು ಮೇಲೆ ಅದರ ಫಲವನ್ನು ಮತ್ತು ಕೆಳಗೆ ಅದರ ಬೇರನ್ನು ಕಿತ್ತು ಹಾಕುವಂತೆ, ಅವರನ್ನು ನಿರ್ಮೂಲ ಮಾಡುವೆನು.</verse>
				<verse number="10">ನಾನೇ ನಿಮ್ಮನ್ನು ಈಜಿಪ್ಟ್ ದೇಶದಿಂದ ಕರೆತಂದೆನು. ಅಮೋರಿಯರ ದೇಶವನ್ನು ನಿಮಗೆ ಸೊತ್ತಾಗಿ ಕೊಡಲು, ನಿಮ್ಮನ್ನು ನಾಲ್ವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದೆನು.</verse>
				<verse number="11">“ನಾನು ನಿಮ್ಮ ಪುತ್ರರಲ್ಲಿ ಪ್ರವಾದಿಗಳನ್ನೂ ನಿಮ್ಮ ಯೌವನಸ್ಥರಲ್ಲಿ ನಾಜೀರರನ್ನೂ ಎಬ್ಬಿಸಿದೆನು. ಇಸ್ರಾಯೇಲಿನ ಜನರೇ, ಇದು ಸರಿಯಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="12">“ಆದರೆ ನೀವು ನಾಜೀರರಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟಿರಿ. ಪ್ರವಾದಿಗಳಿಗೆ ಪ್ರವಾದಿಸಬೇಡಿರಿ ಎಂದು ಆಜ್ಞಾಪಿಸಿದಿರಿ.</verse>
				<verse number="13">“ಇಗೋ, ಸಿವುಡು ತುಂಬಿದ ಬಂಡಿ ಒತ್ತುವ ಪ್ರಕಾರ, ನಾನು ನಿಮ್ಮನ್ನು ಕೆಳಗೆ ಹಾಕಿ ಒತ್ತುವೆನು.</verse>
				<verse number="14">ಆದ್ದರಿಂದ ತ್ವರೆಯಾಗಿ ಓಡುವವನು ತಪ್ಪಿಸಿಕೊಳ್ಳನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು. ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.</verse>
				<verse number="15">ಬಿಲ್ಲು ಹಿಡಿಯುವವನು ಭೂಮಿಯ ಮೇಲೆ ನಿಲ್ಲನು. ಪಾದತ್ವರಿತನು ತಪ್ಪಿಸಿಕೊಳ್ಳನು. ಅಶ್ವಾರೂಢನು ತನ್ನ ಪ್ರಾಣವನ್ನು ಉಳಿಸಿಕೊಳ್ಳನು.</verse>
				<verse number="16">ಶೂರರಲ್ಲಿ ಧೈರ್ಯ ಹೃದಯವುಳ್ಳವನು, ಆ ದಿನದಲ್ಲಿ ಬೆತ್ತಲೆಯಾಗಿ ಓಡಿಹೋಗುವನು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
			</chapter>
			<chapter number="3">
				<verse number="1">ಇಸ್ರಾಯೇಲರೇ, ಯೆಹೋವ ದೇವರು ನಿಮಗೆ ವಿರೋಧವಾಗಿ ಹೇಳುವ ವಾಕ್ಯವನ್ನು ಕೇಳಿರಿ. ನಾನು ಈಜಿಪ್ಟ್ ದೇಶದೊಳಗಿಂದ ಕರೆದುತಂದ ಸಮಸ್ತ ಕುಟುಂಬಕ್ಕೆ ಹೇಳುವುದೇನೆಂದರೆ:</verse>
				<verse number="2">“ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ಆರಿಸಿಕೊಂಡಿದ್ದೇನೆ. ಆದ್ದರಿಂದ ನಾನು ನಿಮ್ಮ ಎಲ್ಲಾ ಪಾಪಗಳಿಗಾಗಿ ಶಿಕ್ಷಿಸುತ್ತೇನೆ.”</verse>
				<verse number="3">ಒಪ್ಪಂದ ಮಾಡಿಕೊಳ್ಳದ ಹೊರತು, ಇಬ್ಬರು ಜೊತೆಯಾಗಿ ನಡೆಯಲು ಸಾಧ್ಯವೋ?</verse>
				<verse number="4">ಬೇಟೆ ಇಲ್ಲದಿದ್ದರೆ, ಅಡವಿಯಲ್ಲಿ ಸಿಂಹವು ಗರ್ಜಿಸುವುದೋ? ಏನಾದರೂ ಹಿಡಿಯದಿದ್ದರೆ, ಗುಹೆಯಲ್ಲಿರುವ ಎಳೆಯ ಸಿಂಹವು ಅರಚುವುದೋ?</verse>
				<verse number="5">ಬೋನು ಇಲ್ಲದಿದ್ದರೆ ಪಕ್ಷಿಯು ಭೂಮಿಯ ಮೇಲೆ ಉರುಲಿನಲ್ಲಿ ಬೀಳುವುದೇ? ಏನೂ ಸಿಕ್ಕಿಕೊಳ್ಳದಿದ್ದರೆ, ಅದನ್ನು ಭೂಮಿಯಿಂದ ಯಾರಾದರೂ ತೆಗೆಯುವರೇ?</verse>
				<verse number="6">ಪಟ್ಟಣದಲ್ಲಿ ಕಹಳೆಯನ್ನು ಊದಿದರೆ, ಜನರು ಹೆದರುವುದಿಲ್ಲವೇ? ಯೆಹೋವ ದೇವರಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೇ?</verse>
				<verse number="7">ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಗಳನ್ನು ತಿಳಿಸದೆ, ಸಾರ್ವಭೌಮ ಯೆಹೋವ ದೇವರು ಏನನ್ನೂ ಮಾಡುವುದಿಲ್ಲ.</verse>
				<verse number="8">ಸಿಂಹವು ಗರ್ಜಿಸಿದರೆ ಭಯಪಡದೆ ಇರುವವರು ಯಾರು? ಸಾರ್ವಭೌಮ ಯೆಹೋವ ದೇವರು ನುಡಿದಿದ್ದಾರೆ, ಅವರ ನುಡಿಯನ್ನು ಪ್ರವಾದಿಸದವರು ಯಾರು?</verse>
				<verse number="9">ಅಷ್ಡೋದಿನ ಕೋಟೆಗಳಲ್ಲಿ ಮತ್ತು ಈಜಿಪ್ಟ್ ದೇಶದ ಕೋಟೆಗಳಲ್ಲಿ ಹೀಗೆ ಸಾರಿ ಹೇಳಿರಿ: “ಸಮಾರ್ಯ ಬೆಟ್ಟಗಳ ಮೇಲೆ ನೀವೆಲ್ಲರೂ ಕೂಡಿಕೊಂಡು, ಅದರ ಮಧ್ಯದಲ್ಲಿರುವ ದೊಡ್ಡ ಗದ್ದಲವನ್ನೂ ಅದರೊಳಗಿರುವ ಹೆಚ್ಚಾದ ಹಿಂಸೆಯನ್ನೂ ನೋಡಿರಿ.”</verse>
				<verse number="10">“ತಮ್ಮ ಕೋಟೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರಿಗೆ, ನ್ಯಾಯ ನೀತಿಯನ್ನು ಮಾಡುವುದಕ್ಕೆ ತಿಳಿಯುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="11">ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ವಿರೋಧಿಯು ದೇಶದ ಸುತ್ತಲೂ ಇರುವನು. ನಿನ್ನ ಬಲವನ್ನು ತಗ್ಗಿಸುವನು. ನಿನ್ನ ಅರಮನೆಗಳು ಸೂರೆಯಾಗುವುವು.”</verse>
				<verse number="12">ಯೆಹೋವ ದೇವರು ಹೀಗೆ ಹೇಳುತ್ತಾರೆ: “ಹೇಗೆ ಕುರುಬನು ಸಿಂಹದ ಬಾಯಿಯಿಂದ ಎರಡು ಕಾಲಿನ ಎಲಬುಗಳನ್ನು ಅಥವಾ ಕಿವಿಯ ಒಂದು ತುಂಡನ್ನು ರಕ್ಷಿಸಲು ಪ್ರಯತ್ನಿಸುತ್ತಾನೋ ಹಾಗೆಯೇ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲರು ಹಾಸಿಗೆಯ ತಲೆ ಮತ್ತು ಮಂಚದ ಬಟ್ಟೆಯ ತುಂಡುಗಳೊಂದಿಗೆ ಸಂರಕ್ಷಣೆ ಹೊಂದುತ್ತಾರೆ.”</verse>
				<verse number="13">ಸರ್ವಶಕ್ತ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: “ನೀವು ಕೇಳಿ, ಯಾಕೋಬಿನ ಮನೆತನದವರಿಗೆ ವಿರುದ್ಧವಾಗಿ ಸಾಕ್ಷಿ ಕೊಡಿರಿ.”</verse>
				<verse number="14">“ನಾನು ಇಸ್ರಾಯೇಲಿನ ಪಾಪಗಳನ್ನು ವಿಚಾರಿಸುವ ದಿವಸದಲ್ಲಿ, ಬೇತೇಲಿನ ಬಲಿಪೀಠಗಳನ್ನು ನಾಶಮಾಡುವೆನು. ಬಲಿಪೀಠದ ಕೊಂಬುಗಳು ಕಡಿಯಲಾಗಿ, ನೆಲಕ್ಕೆ ಉರುಳುವುವು.</verse>
				<verse number="15">ಚಳಿಗಾಲದ ಮನೆಯನ್ನು ಬೇಸಿಗೆಯ ಮನೆಯ ಸಂಗಡ ಹೊಡೆದು ಹಾಕುವೆನು. ಆಗ ದಂತ ಮಂದಿರಗಳು ನಾಶವಾಗುವುವು. ದೊಡ್ಡ ಮನೆಗಳು ಕೊನೆಗಾಣುವುವು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
			</chapter>
			<chapter number="4">
				<verse number="1">ಸಮಾರ್ಯ ಬೆಟ್ಟದಲ್ಲಿರುವ ಬಾಷಾನಿನ ಹಸುಗಳಂತಿರುವ ಮಹಿಳೆಯರೇ, ನೀವು ಬಡವರನ್ನು ಹಿಂಸಾಚಾರ ಮಾಡಿ, ದರಿದ್ರರನ್ನು ಜಜ್ಜಿ, ನಿಮ್ಮ ಪತಿಗಳಿಗೆ, “ಪಾನವನ್ನು ತರಿಸಿರಿ, ಕುಡಿಯೋಣ,” ಎಂದು ಹೇಳುವವರೇ, ಈ ವಾಕ್ಯವನ್ನು ಕೇಳಿರಿ.</verse>
				<verse number="2">“ದಿನಗಳು ಬರುವುವು. ಆಗ ನಿಮ್ಮನ್ನು ಕೊಂಡಿಗಳಿಂದ ಎಳೆದುಕೊಂಡು ಹೋಗುವರು. ನಿಮ್ಮಲ್ಲಿ ಅಳಿದುಳಿದವರನ್ನು ಗಾಳಕ್ಕೆ ಸಿಕ್ಕಿದ ಮೀನಿನಂತೆ ಸೆಳೆದೊಯ್ಯುವರು. ಎಂದು ಸಾರ್ವಭೌಮ ಯೆಹೋವ ದೇವರು ಇದನ್ನು ಆಣೆಯಿಟ್ಟು ನುಡಿದಿದ್ದಾರೆ.</verse>
				<verse number="3">ಗೋಡೆಯಲ್ಲಿಯ ಬಿರುಕುಗಳ ಮೂಲಕ ನೀವು ಹೊರಟು ಹೋಗುವಿರಿ. ನಿಮ್ಮನ್ನು ಹರ್ಮೋನಿನ ಕಡೆಗೆ ಎಸೆಯಲಾಗುತ್ತದೆ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="4">“ಪಾಪ ಮಾಡಬೇಕಾದರೆ, ಬೇತೇಲಿಗೆ ಹೋಗಿ ಪಾಪ ಮಾಡಿರಿ. ಗಿಲ್ಗಾಲಿಗೆ ಹೋಗಿ ಯಥೇಚ್ಛವಾಗಿ ಪಾಪ ಮಾಡಿರಿ. ಪ್ರತಿದಿನವೂ ಪ್ರಾತಃಕಾಲದ ಬಲಿಗಳನ್ನು ಅರ್ಪಿಸಿರಿ. ಮೂರು ದಿನಗಳಿಗೊಮ್ಮೆ ದಶಮಾಂಶವನ್ನು ಸಲ್ಲಿಸಿರಿ.”</verse>
				<verse number="5">“ಹುಳಿಹಿಟ್ಟಿನ ರೊಟ್ಟಿಯನ್ನು ಹೋಮ ಮಾಡಿ, ಸ್ತೋತ್ರದ ಯಜ್ಞವನ್ನೂ ಅರ್ಪಿಸಿರಿ. ಕಾಣಿಕೆ ಕೊಟ್ಟದ್ದನ್ನು ಹೇಳಿಕೊಳ್ಳಿರಿ. ಇಸ್ರಾಯೇಲರೇ, ಹೀಗೆ ಮಾಡುವುದು ಇಷ್ಟವಾಗಿದೆ,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.</verse>
				<verse number="6">“ಪ್ರತಿಯೊಂದು ಪಟ್ಟಣದಲ್ಲಿ ಬರಿದಾದ ಹೊಟ್ಟೆಗಳನ್ನು ನಿಮಗೆ ಕೊಟ್ಟಿದ್ದೇನೆ. ಪ್ರತಿಯೊಂದು ಪಟ್ಟಣದಲ್ಲಿ ಆಹಾರದ ಕೊರತೆಯಿದೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="7">“ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ, ಮಳೆಯನ್ನು ನಾನು ನಿಮ್ಮಿಂದ ಹಿಂದೆಗೆದಿದ್ದೇನೆ. ಒಂದು ಪಟ್ಟಣದ ಮೇಲೆ ಮಳೆ ಸುರಿಸಿ, ಇನ್ನೊಂದು ಪಟ್ಟಣದ ಮೇಲೆ ಮಳೆ ಸುರಿಸಲಿಲ್ಲ. ಒಂದು ಹೊಲದ ಮೇಲೆ ಮಳೆ ಸುರಿಸಿ, ಇನ್ನೊಂದು ಹೊಲದ ಮೇಲೆ ಮಳೆ ಸುರಿಸಲಿಲ್ಲ ಮತ್ತು ಅದು ಒಣಗಿ ಹೋಯಿತು.</verse>
				<verse number="8">ಎರಡು ಅಥವಾ ಮೂರು ಪಟ್ಟಣದವರು ಕುಡಿಯುವ ನೀರಿಗಾಗಿ ಒಂದು ಪಟ್ಟಣದಿಂದ ಇನ್ನೊಂದು ಪಟ್ಟಣಕ್ಕೆ ಅಲೆದಾಡುತ್ತಾ ಹೋದರೂ, ಅವರ ಬಾಯಾರಿಕೆ ತೀರಲಿಲ್ಲ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="9">“ಬಿಸಿಗಾಳಿಯನ್ನು ಕಳುಹಿಸಿ ನಿಮ್ಮ ಉದ್ಯಾನವನಗಳನ್ನು ಮತ್ತು ದ್ರಾಕ್ಷಿತೋಟಗಳನ್ನು ಒಣಗುವಂತೆ ಮಾಡಿದೆ. ನಿಮ್ಮ ಬೆಳೆ ರೋಗ ಮತ್ತು ಶಿಲೀಂಧ್ರವುಗಳಿಂದ ನಾಶವಾಯಿತು. ನಿಮ್ಮ ಅಂಜೂರದ ಗಿಡ ಮತ್ತು ಎಣ್ಣೆಮರಗಳನ್ನೂ ಮಿಡತೆಗಳು ತಿಂದು ಬಿಡುವಂತೆ ಮಾಡಿದೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ, ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="10">“ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ, ನಿಮ್ಮ ಯೌವನಸ್ಥರನ್ನೂ ಖಡ್ಗದಿಂದ ಕೊಂದು ಹಾಕಿದ್ದೇನೆ. ನಿಮ್ಮ ಪಾಳೆಯಗಳ ದುರ್ವಾಸನೆಯು ನಿಮ್ಮ ಮೂಗು ಸಹಿಸದ ಹಾಗೆ ಮಾಡಿದ್ದೇನೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="11">“ಸೊದೋಮನ್ನೂ, ಗೊಮೋರವನ್ನೂ ಕೆಡವಿದ ಹಾಗೆ, ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ. ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವೂ ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="12">ಇಸ್ರಾಯೇಲೇ, ನಾನು ನಿನಗೆ ಹೀಗೆ ಮಾಡುತ್ತೇನೆ. ನಾನು ನಿನಗೆ ಹೀಗೆ ಮಾಡುವುದರಿಂದ, ನೀನು ನಿನ್ನ ದೇವರನ್ನು ಎದುರುಗೊಳ್ಳಲು ಸಿದ್ಧಮಾಡಿಕೋ.</verse>
				<verse number="13">ಬೆಟ್ಟಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ, ಭೂಮಿಯ ಉನ್ನತ ಸ್ಥಳಗಳನ್ನು ತುಳಿದುಬಿಡುವಾತನು, ಸರ್ವಶಕ್ತರಾದ ಯೆಹೋವ ದೇವರು ಇದೇ ಅವರ ಹೆಸರು.</verse>
			</chapter>
			<chapter number="5">
				<verse number="1">ಇಸ್ರಾಯೇಲಿನ ಜನರೇ, ನಿಮ್ಮನ್ನು ಕುರಿತು ನಾನು ಹಾಡುವ ಈ ಶೋಕಗೀತೆಯ ವಾಕ್ಯವನ್ನು ಕೇಳಿರಿ:</verse>
				<verse number="2">“ಇಸ್ರಾಯೇಲ್ ಎಂಬ ಕನ್ಯೆಯು ಬಿದ್ದಿದ್ದಾಳೆ. ಇನ್ನು ಮೇಲೆ ಎದ್ದೇಳುವುದೇ ಇಲ್ಲ. ಅವಳು ದಿಕ್ಕಿಲ್ಲದೆ ತನ್ನ ಭೂಮಿಯ ಮೇಲೆ ಒರಗಿದ್ದಾಳೆ. ಅಲ್ಲಿ ಅವಳನ್ನು ಎಬ್ಬಿಸುವವರು ಯಾರೂ ಇಲ್ಲ.”</verse>
				<verse number="3">ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯುದ್ಧಕ್ಕೆ ಹೊರಟ ಸಾವಿರ ಮಂದಿ ಸೈನಿಕರಲ್ಲಿ, ಪಟ್ಟಣಕ್ಕೆ ಮರಳಿದವರು ನೂರೇ ಮಂದಿ. ರಣರಂಗಕ್ಕೆ ಹೊರಟ ನೂರು ಮಂದಿ ಯೋಧರಲ್ಲಿ, ಇಸ್ರಾಯೇಲಿಗೆ ಮರಳಿದವರು ಹತ್ತೇ ಮಂದಿ.”</verse>
				<verse number="4">ಯೆಹೋವ ದೇವರು ಇಸ್ರಾಯೇಲಿನ ಮನೆಯವರಿಗೆ ಹೀಗೆ ಹೇಳುತ್ತಾರೆ: “ನೀವು ನನ್ನನ್ನು ಹುಡುಕಿರಿ ಮತ್ತು ಬದುಕಿಕೊಳ್ಳಿರಿ.</verse>
				<verse number="5">ಆದರೆ ಬೇತೇಲನ್ನು ಹುಡುಕಬೇಡಿರಿ. ಗಿಲ್ಗಾಲಿಗೆ ಹೋಗಬೇಡಿರಿ. ಬೇರ್ಷೆಬಕ್ಕೆ ಯಾತ್ರೆ ಹೋಗಬೇಡಿರಿ. ಏಕೆಂದರೆ ಗಿಲ್ಗಾಲು ಸೆರೆಗೆ ನಿಶ್ವಯವಾಗಿ ಹೋಗುವುದು, ಬೇತೇಲಿನ ಬಾಧೆಗಳು ಕೊನೆಗೊಳ್ಳುವುದಿಲ್ಲ.”</verse>
				<verse number="6">ನೀವು ಯೆಹೋವ ದೇವರನ್ನು ಹುಡುಕಿರಿ ಮತ್ತು ಬದುಕಿರಿ. ಇಲ್ಲದಿದ್ದರೆ, ಆತನು ಬೆಂಕಿಯಂತೆ ಯೋಸೇಫನ ಗೋತ್ರಗಳಲ್ಲಿ ಪ್ರವೇಶಿಸುವನು. ಅದು ದಹಿಸಿಬಿಡುವುದು, ಅದನ್ನು ಆರಿಸುವವರು ಬೇತೇಲಿನಲ್ಲಿ ಯಾರೂ ಇರುವುದಿಲ್ಲ.</verse>
				<verse number="7">ನ್ಯಾಯವನ್ನು ಕಹಿಯಾಗಿ ತಿರುಗಿಸುವವರೇ, ನೀತಿಯನ್ನು ಭೂಮಿಯಲ್ಲಿ ಬಿಡುವವರೇ.</verse>
				<verse number="8">ವೃಷಭ ರಾಶಿಯನ್ನೂ, ಮೃಗಶಿರವನ್ನೂ ಉಂಟು ಮಾಡಿದವನನ್ನೂ ಕಾರ್ಗತ್ತಲನ್ನು ಉದಯಕ್ಕೆ ಬದಲಿಸಿ, ಹಗಲನ್ನು ರಾತ್ರಿಯಾಗುವ ಹಾಗೆ ಕತ್ತಲೆ ಮಾಡಿ, ಸಮುದ್ರದ ನೀರನ್ನು ಬರಮಾಡಿ, ಅವುಗಳನ್ನು ಭೂಮಿಯ ಮೇಲೆ ಸುರಿಸುವ ಯೆಹೋವ ದೇವರು ಎಂಬ ಹೆಸರುಳ್ಳವರನ್ನೇ ಹುಡುಕಿರಿ.</verse>
				<verse number="9">ಕಣ್ಣು ಮಿಟುಕಿಸುವುದರಲ್ಲಿ ಅವರು ಕೋಟೆಯನ್ನು ನಾಶಪಡಿಸುತ್ತಾರೆ ಮತ್ತು ಕೋಟೆಯ ನಗರವನ್ನು ವಿನಾಶಪಡಿಸುತ್ತಾರೆ.</verse>
				<verse number="10">ಸಭೆಯಲ್ಲಿ ದೋಷವನ್ನು ಎತ್ತಿ ತೋರಿಸುವವನನ್ನು ನೀವು ದ್ವೇಷಿಸುತ್ತೀರಿ. ನಿಮ್ಮ ವಿಷಯವಾಗಿ ಸತ್ಯವನ್ನು ಹೇಳುವವನನ್ನೇ ಹೀನೈಸುತ್ತೀರಿ.</verse>
				<verse number="11">ಆದಕಾರಣ ನೀವು ಬಡವನನ್ನು ತುಳಿದು ಅವರ ಧಾನ್ಯಕ್ಕೆ ತೆರಿಗೆ ವಿಧಿಸುತ್ತೀರಿ. ಆದ್ದರಿಂದ ನೀವು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಿ. ಆದರೆ ನೀವು ಅವುಗಳಲ್ಲಿ ವಾಸ ಮಾಡದೇ ಇರುವಿರಿ. ರಮ್ಯವಾದ ದ್ರಾಕ್ಷಿತೋಟಗಳನ್ನು ನೆಟ್ಟಿರಲ್ಲಾ, ಆದರೆ ಅವುಗಳ ದ್ರಾಕ್ಷಾರಸವನ್ನು ಕುಡಿಯಲಾರಿರಿ.</verse>
				<verse number="12">ಏಕೆಂದರೆ ನಿಮ್ಮ ಅನೇಕ ಅಪರಾಧಗಳನ್ನೂ, ನಿಮ್ಮ ಘೋರವಾದ ಪಾಪಗಳನ್ನೂ ನಾನು ಬಲ್ಲೆನು. ಅವರು ನಿರಪರಾಧಿಯನ್ನು ಬಾಧೆಪಡಿಸಿ, ಲಂಚವನ್ನು ತೆಗೆದುಕೊಂಡರು ಮತ್ತು ಬಾಗಿಲ ಬಳಿಯಲ್ಲಿರುವ ಬಡವರ ನ್ಯಾಯವನ್ನು ತೀರಿಸದೇ ಕಳುಹಿಸಿಬಿಟ್ಟಿರಿ.</verse>
				<verse number="13">ಆದ್ದರಿಂದ ಆ ಕಾಲದಲ್ಲಿ ಬುದ್ಧಿವಂತನು ಮೌನವಾಗಿರುವನು, ಏಕೆಂದರೆ ಅದು ಕೆಟ್ಟ ಕಾಲವಾಗಿದೆ.</verse>
				<verse number="14">ನೀವು ಬದುಕುವ ಹಾಗೆ ಒಳ್ಳೆಯದನ್ನು ಹುಡುಕಿ, ಕೆಟ್ಟದ್ದನ್ನಲ್ಲ. ಆಗ ನೀವು ಹೇಳಿಕೊಳ್ಳುವಂತೆ ಸರ್ವಶಕ್ತರಾದ ಯೆಹೋವ ದೇವರು ನಿಮ್ಮ ಸಂಗಡ ಇರುವರು.</verse>
				<verse number="15">ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಬಾಗಿಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸರ್ವಶಕ್ತರಾದ ಯೆಹೋವ ದೇವರು ಯೋಸೇಫನ ಗೋತ್ರದಲ್ಲಿ ಉಳಿದವರಿಗೆ ಕನಿಕರಿಸಬಹುದು.</verse>
				<verse number="16">ಆದ್ದರಿಂದ ಸರ್ವಶಕ್ತ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಎಲ್ಲಾ ಬೀದಿಗಳಲ್ಲೂ ವಿಲಾಪಗಳು, ಎಲ್ಲಾ ಸಾರ್ವಜನಿಕ ಚೌಕದಲ್ಲಿ ದುಃಖದ ಗೋಳಾಟಗಳು ಎನ್ನುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು, ಗೋಳಾಡುವುದಕ್ಕೂ ಕರೆಯಲಾಗುವುದು.</verse>
				<verse number="17">ಎಲ್ಲಾ ದ್ರಾಕ್ಷಿ ತೋಟಗಳಲ್ಲೂ ಗೋಳಾಟವು ಇರುವುದು. ಏಕೆಂದರೆ ನಾನು ನಿನ್ನ ಮಧ್ಯೆ ಹಾದು ಹೋಗುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="18">ಯೆಹೋವ ದೇವರ ದಿನವನ್ನು ಅಪೇಕ್ಷಿಸುವವರೇ, ಅಯ್ಯೋ ನಿಮಗೆ ಕಷ್ಟ! ಆ ದಿನವನ್ನು ನೀವು ಅಪೇಕ್ಷಿಸುವುದೇಕೆ? ಯೆಹೋವ ದೇವರ ದಿವಸವು ನಿಮಗೆ ಬೆಳಕಲ್ಲ, ಕತ್ತಲೆಯೇ.</verse>
				<verse number="19">ಇದು ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ, ಕರಡಿಯನ್ನು ಎದುರುಗೊಂಡ ಹಾಗೆಯೂ, ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈಯನ್ನು ಒರಗಿಸಿದಾಗ, ಸರ್ಪವು ಕಚ್ಚಿದ ಹಾಗೆಯೂ ಇರುವುದು.</verse>
				<verse number="20">ಹೀಗೆ ಯೆಹೋವ ದೇವರ ದಿವಸವು ಬೆಳಕಲ್ಲ, ಕತ್ತಲೆಯೇ. ಅದರಲ್ಲಿ ಪ್ರಕಾಶವೇನೂ ಇಲ್ಲದ ಕಾರ್ಗತ್ತಲೆಯೇ.</verse>
				<verse number="21">ನಿಮ್ಮ ಹಬ್ಬಗಳನ್ನು ಹಗೆಮಾಡಿ ತುಚ್ಛೀಕರಿಸುತ್ತೇನೆ. ನಿಮ್ಮ ಸಭೆಗಳು ನನಗೆ ದುರ್ವಾಸನೆ ಇದ್ದಂತೆ.</verse>
				<verse number="22">ನೀವು ನನಗೆ ದಹನಬಲಿಗಳನ್ನೂ ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ, ನಾನು ಅವುಗಳನ್ನು ಅಂಗೀಕರಿಸುವುದಿಲ್ಲ. ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನೂ ನಾನು ಲಕ್ಷಿಸುವುದಿಲ್ಲ.</verse>
				<verse number="23">ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ. ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವುದಿಲ್ಲ.</verse>
				<verse number="24">ಆದರೆ ನ್ಯಾಯವು ನೀರಿನಂತೆಯೂ ನೀತಿಯು ಬಲವಾದ ಪ್ರವಾಹದಂತೆಯೂ ಹರಿಯಲಿ.</verse>
				<verse number="25">ಇಸ್ರಾಯೇಲಿನ ಮನೆತನದವರೇ, ನೀವು ನನಗೆ ನಲವತ್ತು ವರ್ಷ ಮರುಭೂಮಿಯಲ್ಲಿ ಬಲಿಗಳನ್ನು, ಕಾಣಿಕೆಗಳನ್ನು ಅರ್ಪಿಸಿದಿರೋ?</verse>
				<verse number="26">ಆದರೆ ನೀವು ನಿಮಗೋಸ್ಕರ ಮಾಡಿಕೊಂಡ ಮೂರ್ತಿಗಳಾದ ಸಿಕ್ಕೊತ್ ಎಂಬ ನಿಮ್ಮ ರಾಜನನ್ನೂ ಕಿಯೂನ್ ಎಂಬ ನಿಮ್ಮ ನಕ್ಷತ್ರ ದೇವತೆಯನ್ನೂ ನೀವೇ ಹೊತ್ತುಕೊಂಡು ಹೋಗಬೇಕಾಗುವುದು.</verse>
				<verse number="27">ಆದ್ದರಿಂದ ದಮಸ್ಕದ ಆಚೆ ನಿಮ್ಮನ್ನು ಸೆರೆಯಾಳುಗಳಾಗಿ ಕಳುಹಿಸುವೆ, ಎಂದು ಸರ್ವಶಕ್ತರಾದ ದೇವರೆಂದು ಹೆಸರುಗೊಂಡ ಯೆಹೋವ ದೇವರು ಹೇಳುತ್ತಾರೆ.</verse>
			</chapter>
			<chapter number="6">
				<verse number="1">ಚೀಯೋನಿನಲ್ಲಿ ಹಾಯಾಗಿರುವವರಿಗೂ, ಸಮಾರ್ಯ ಬೆಟ್ಟದಲ್ಲಿ ಸುಭದ್ರವಾಗಿರುವವರಿಗೂ, ಇಸ್ರಾಯೇಲಿನ ಮನೆತನದವರು ಯಾರ ಬಳಿಗೆ ಬರುತ್ತಾರೋ, ಆ ಪ್ರಮುಖ ಜನಾಂಗದಲ್ಲಿ ಹೆಸರುಗೊಂಡವರಿಗೂ ಕಷ್ಟ!</verse>
				<verse number="2">ಕಲ್ನೇ ಪಟ್ಟಣಕ್ಕೆ ಹೋಗಿ ನೋಡಿರಿ. ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ಹೋಗಿರಿ. ಅಲ್ಲಿಂದ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ. ಅವು ನಿಮ್ಮ ಎರಡು ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಕ್ಕಿಂತ ದೊಡ್ಡದೋ?</verse>
				<verse number="3">ನೀವು ಕೆಟ್ಟ ದಿವಸವನ್ನು ದೂರಮಾಡಿಕೊಂಡು, ಭಯಂಕರ ಆಳ್ವಿಕೆಯನ್ನು ಹತ್ತಿರ ಮಾಡಿಕೊಳ್ಳುತ್ತೀರಿ.</verse>
				<verse number="4">ದಂತದ ಮಂಚಗಳ ಮೇಲೆ ಮಲಗಿಕೊಳ್ಳುತ್ತೀರಿ. ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿಕೊಳ್ಳುತ್ತೀರಿ. ಮಂದೆಯೊಳಗಿಂದ ಕುರಿಮರಿಗಳನ್ನೂ ಹಟ್ಟಿಯ ಮಂದೆಯೊಳಗಿಂದ ಕರುಗಳನ್ನೂ ತಿನ್ನುತ್ತೀರಿ.</verse>
				<verse number="5">ವೀಣೆಯ ಸ್ವರಕ್ಕೆ ಹಾಡುತ್ತೀರಿ, ದಾವೀದನ ಹಾಗೆ ನಿಮಗೆ ನೀವೇ ಗಾನವಾದ್ಯಗಳನ್ನು ಕಲ್ಪಿಸಿಕೊಳ್ಳುತ್ತೀರಿ.</verse>
				<verse number="6">ನೀವು ತುಂಬಿದ ಪಾತ್ರೆಗಳಲ್ಲಿ ದ್ರಾಕ್ಷಾರಸವನ್ನು ಕುಡಿಯುತ್ತೀರಿ, ಶ್ರೇಷ್ಠವಾದ ಎಣ್ಣೆಗಳಿಂದ ನಿಮ್ಮನ್ನು ಅಭಿಷೇಕಿಸಿಕೊಳ್ಳುತ್ತೀರಿ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನ ಪಡುವುದಿಲ್ಲ.</verse>
				<verse number="7">ಆದ್ದರಿಂದ ಸೆರೆಗೆ ಕರೆದೊಯ್ಯುವವರಲ್ಲಿ ನೀವು ಮೊದಲಿಗರಾಗಿರುವಿರಿ, ಭೋಗ ಮಾಡುವವರ ಹರ್ಷ ಧ್ವನಿಯು ಗತಿಸಿ ಹೋಗುವುದು.</verse>
				<verse number="8">ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಸರ್ವಶಕ್ತ ದೇವರಾದ ಯೆಹೋವ ದೇವರು ತಮ್ಮ ಮೇಲೆ ಆಣೆಯಿಟ್ಟುಕೊಂಡಿದ್ದಾರೆ: ನಾನು ಯಾಕೋಬಿನ ಅಹಂಕಾರವನ್ನು ಅಸಹ್ಯಿಸಿಕೊಂಡು, ಅವನ ಅರಮನೆಗಳನ್ನು ಹಗೆಮಾಡುತ್ತೇನೆ. ಆದಕಾರಣ ಪಟ್ಟಣವನ್ನೂ ಅದರಲ್ಲಿರುವ ಸಮಸ್ತವನ್ನೂ ನಾನು ಒಪ್ಪಿಸಿ ಬಿಡುತ್ತೇನೆ.</verse>
				<verse number="9">ಒಂದು ಮನೆಯಲ್ಲಿ ಹತ್ತು ಜನರು ಉಳಿದರೆ, ಅವರು ಸಾಯುವರು.</verse>
				<verse number="10">ಮತ್ತು ಸಂಬಂಧಿಯೊಬ್ಬರು ಮೃತ ದೇಹಗಳನ್ನು ಸುಡಲು ಆ ಮನೆಯಿಂದ ಹೊರತೆಗೆಯಲು ಬಂದಾಗ ಮತ್ತು ಅಲ್ಲಿ ಅಡಗಿಕೊಂಡಿದ್ದ ವ್ಯಕ್ತಿಯನ್ನು, “ನಿಮ್ಮೊಂದಿಗೆ ಬೇರೆ ಯಾರಾದರೂ ಇದ್ದಾರೆಯೇ?” ಎಂದು ಕೇಳಲು ಅವನು ಇಲ್ಲ ಎನ್ನುವನು. ಆಗ ಆ ಸಂಬಂಧಿಕನು, “ಮೌನದಿಂದಿರು! ನಾವು ಯೆಹೋವ ದೇವರ ಹೆಸರನ್ನು ತೆಗೆದುಕೊಳ್ಳಬಾರದು.”</verse>
				<verse number="11">ಏಕೆಂದರೆ, ಯೆಹೋವ ದೇವರು ಆಜ್ಞಾಪಿಸುತ್ತಾರೆ, ಆತನು ದೊಡ್ಡ ಮನೆಯನ್ನು ಸೀಳುಗಳಿಂದಲೂ ಚಿಕ್ಕ ಮನೆಯನ್ನು ಬಿರುಕುಗಳಿಂದಲೂ ಹೊಡೆಯುವನು.</verse>
				<verse number="12">ಕುದುರೆಗಳು ಬಂಡೆಯ ಮೇಲೆ ಓಡುವುದುಂಟೇ? ಎತ್ತುಗಳಿಂದ ಅಲ್ಲಿ ಉಳುವನೋ? ನಿಮ್ಮ ನ್ಯಾಯವನ್ನು ವಿಷವನ್ನಾಗಿ, ನೀತಿ ಫಲವನ್ನು ಕಹಿಯನ್ನಾಗಿ ಬದಲಾಯಿಸಿದ್ದೀರಿ.</verse>
				<verse number="13">ಏನೂ ಇಲ್ಲದಿದ್ದರಲ್ಲಿ ಸಂತೋಷ ಪಡುವವರೇ, ನೀವು ಹೆಚ್ಚಳ ಪಡುವುದು ಶೂನ್ಯವಾಗಿರುವುದರಲ್ಲಿಯೇ? “ಸ್ವಬಲದಿಂದ ಕೊಂಬುಗಳನ್ನು ತೆಗೆದುಕೊಂಡಿಲ್ಲವೇ?” ಅಂದುಕೊಳ್ಳುತ್ತೀರಿ.</verse>
				<verse number="14">ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಸ್ರಾಯೇಲಿನ ಮನೆತನದವರೇ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುವೆನು. ಲೆಬೊ ಹಮಾತಿನ ಪ್ರದೇಶದಿಂದ ಅರಾಬಾ ತಗ್ಗಿನ ನದಿಯವರೆಗೂ ನಿಮ್ಮನ್ನು ಹಿಂಸಿಸುವರು.</verse>
			</chapter>
			<chapter number="7">
				<verse number="1">ಸಾರ್ವಭೌಮ ಯೆಹೋವ ದೇವರು ನನಗೆ ಹೀಗೆ ತೋರಿಸಿದರು: ಹಿಂಗಾರು ಮಳೆ ಬಿದ್ದು, ಪೈರು ಸೊಂಪಾಗುವುದಕ್ಕೆ ಆರಂಭವಾದಾಗ, ಅಂದರೆ ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ, ಬೆಳೆಯು ವೃದ್ಧಿಯಾಗುತ್ತಿದ್ದಾಗ, ಇಗೋ ಯೆಹೋವ ದೇವರು, ಮಿಡತೆಗಳನ್ನು ಉಂಟುಮಾಡಿದರು.</verse>
				<verse number="2">ಅವು ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು, “ಸಾರ್ವಭೌಮ ಯೆಹೋವ ದೇವರೇ, ಲಾಲಿಸು, ನನ್ನನ್ನು ಮನ್ನಿಸು. ಯಾಕೋಬ ಜನಾಂಗ ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ,” ಎಂದು ವಿಜ್ಞಾಪಿಸಿಕೊಂಡೆನು.</verse>
				<verse number="3">ಯೆಹೋವ ದೇವರು ಇದನ್ನು ಕುರಿತು ಮನಮರುಗಿ, “ಈ ದರ್ಶನ ನೆರವೇರುವುದಿಲ್ಲ,” ಎಂದರು.</verse>
				<verse number="4">ಸಾರ್ವಭೌಮ ಯೆಹೋವ ದೇವರು ನನಗೆ ಹೀಗೆ ತೋರಿಸಿದರು: ಸಾರ್ವಭೌಮ ಯೆಹೋವ ದೇವರು ಬೆಂಕಿಯಿಂದ ನ್ಯಾಯತೀರ್ಪು ಮಾಡುವುದಕ್ಕೆ ಕರೆದರು. ಅದು ದೊಡ್ಡ ಅಗಾಧವನ್ನು ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.</verse>
				<verse number="5">ಆಗ ನಾನು, “ಸಾರ್ವಭೌಮ ಯೆಹೋವ ದೇವರೇ, ನಿಲ್ಲಿಸಿಬಿಡಿರಿ,” ಎಂದು ಬೇಡಿಕೊಳ್ಳುತ್ತೇನೆ. “ಯಾಕೋಬನು ಹೇಗೆ ಬದುಕುಳಿಯುತ್ತಾನೆ? ಅವನು ತುಂಬಾ ಚಿಕ್ಕವನು,” ಎಂದು ಮೊರೆಯಿಟ್ಟೆನು.</verse>
				<verse number="6">ಆಗ ಸಾರ್ವಭೌಮ ಯೆಹೋವ ದೇವರು ಇದನ್ನು ಕುರಿತು ಮನಮರುಗಿ, “ಈ ದರ್ಶನ ನೆರವೇರುವುದಿಲ್ಲ,” ಎಂದರು.</verse>
				<verse number="7">ಆತನು ನನಗೆ ಹೀಗೆ ತೋರಿಸಿದನು. ಯೆಹೋವ ದೇವರು ನೂಲುಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದರು. ಆತನ ಕೈಯಲ್ಲಿ ನೂಲುಗುಂಡು ಇತ್ತು.</verse>
				<verse number="8">ಯೆಹೋವ ದೇವರು ನನಗೆ, “ಆಮೋಸನೇ, ಏನನ್ನು ನೋಡುತ್ತಿರುವೆ?” ಎಂದು ಕೇಳಿದರು. ಆಗ ನಾನು, “ನೂಲುಗುಂಡು,” ಎಂದೆನು. ನಂತರ ಯೆಹೋವ ದೇವರು ಹೇಳಿದ್ದೇನೆಂದರೆ, “ನೋಡು, ನಾನು ನನ್ನ ಜನರಾದ ಇಸ್ರಾಯೇಲರ ಮಧ್ಯದಲ್ಲಿ ನೂಲುಗುಂಡನ್ನು ಇಡುತ್ತೇನೆ. ಇನ್ನು ಮೇಲೆ ಅವರನ್ನು ದಾಟಿ ಹೋಗುವುದಿಲ್ಲ.</verse>
				<verse number="9">“ಇಸಾಕನ ಉನ್ನತ ಪೂಜಾಸ್ಥಳಗಳು ನಾಶವಾಗುವುವು. ಇಸ್ರಾಯೇಲಿನ ಪರಿಶುದ್ಧ ಸ್ಥಳಗಳು ಹಾಳಾಗುವುವು. ನಾನು ಖಡ್ಗದೊಂದಿಗೆ ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು.”</verse>
				<verse number="10">ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ ಕಳುಹಿಸಿ ಹೇಳಿದ್ದೇನೆಂದರೆ: “ಆಮೋಸನು ಇಸ್ರಾಯೇಲಿನ ಮನೆತನದವರ ಮಧ್ಯದಲ್ಲಿ ನಿನಗೆ ವಿರೋಧವಾಗಿ ಒಳಸಂಚು ಮಾಡಿದ್ದಾನೆ. ದೇಶವು ಅವನ ಎಲ್ಲಾ ಮಾತುಗಳನ್ನು ತಾಳಲಾರದು.</verse>
				<verse number="11">ಆಮೋಸನು ಹೇಳಿದ್ದೇನೆಂದರೆ: “ಯಾರೊಬ್ಬಾಮನು ಖಡ್ಗದಿಂದ ಸಾಯುವನೆಂದೂ ಇಸ್ರಾಯೇಲರು ನಿಶ್ಚಯವಾಗಿ ತಮ್ಮ ಸ್ವದೇಶದಿಂದ ಸೆರೆಯಾಗಿ ಕರೆದೊಯ್ಯುವರು.”</verse>
				<verse number="12">ಅನಂತರ ಅಮಚ್ಯನು ಆಮೋಸನಿಗೆ ಹೇಳಿದ್ದೇನೆಂದರೆ: “ದರ್ಶಿಯೇ, ಯೆಹೂದ ದೇಶಕ್ಕೆ ಓಡಿಹೋಗು. ಅಲ್ಲಿ ದುಡಿದು ರೊಟ್ಟಿ ತಿಂದು ಅಲ್ಲಿಯೇ ಪ್ರವಾದಿಸು.</verse>
				<verse number="13">ಆದರೆ ಇನ್ನು ಮೇಲೆ ಬೇತೇಲಿನಲ್ಲಿ ಪ್ರವಾದಿಸಬೇಡ. ಏಕೆಂದರೆ ಅದು ಅರಸನ ಪರಿಶುದ್ಧ ಸ್ಥಾನವಾಗಿಯೂ, ರಾಜ್ಯದ ಆಲಯವಾಗಿಯೂ ಇದೆ,” ಎಂದನು.</verse>
				<verse number="14">ಆಗ ಆಮೋಸನು ಅಮಚ್ಯನಿಗೆ ಉತ್ತರವಾಗಿ, “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ಆದರೆ ನಾನು ಕುರುಬನೂ ಅತ್ತಿಹಣ್ಣುಗಳನ್ನು ಕೂಡಿಸುವವನೂ ಆಗಿದ್ದೆನು,” ಎಂದನು.</verse>
				<verse number="15">ನಾನು ಕುರಿಯ ಹಿಂಡನ್ನು ಹಿಂಬಾಲಿಸುವ ವೇಳೆಯಲ್ಲಿ, ಯೆಹೋವ ದೇವರು ನನ್ನನ್ನು ಕರೆದು ಹೇಳಿದ್ದೇನೆಂದರೆ: “ನೀನು ಹೋಗಿ ನನ್ನ ಜನರಾದ ಇಸ್ರಾಯೇಲರಿಗೆ ಪ್ರವಾದಿಸು.”</verse>
				<verse number="16">ಹೀಗಿರುವುದರಿಂದ ನೀನು ಈಗ ಯೆಹೋವ ದೇವರ ವಾಕ್ಯವನ್ನು ಕೇಳು: ಇಸ್ರಾಯೇಲಿಗೆ ಪ್ರವಾದನೆ ಮಾಡಬೇಡವೆಂದೂ, ಇಸಾಕನ ಮನೆತನಕ್ಕೆ ವಿರೋಧವಾಗಿ ಖಂಡನೆ ಮಾಡಬಾರದೆಂದೂ ನೀನು ಹೇಳುವೆಯಲ್ಲಾ.</verse>
				<verse number="17">ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: “ ‘ನಿನ್ನ ಹೆಂಡತಿ ಪಟ್ಟಣದಲ್ಲಿ ವ್ಯಭಿಚಾರಿಣಿಯಾಗುವಳು. ನಿನ್ನ ಪುತ್ರ ಪುತ್ರಿಯರೂ ಖಡ್ಗದಿಂದ ಬೀಳುವರು. ನಿನ್ನ ದೇಶವನ್ನು ಅಳೆಯಲಾಗುತ್ತದೆ ಮತ್ತು ವಿಭಾಗಿಸಲಾಗುತ್ತದೆ. ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಕರೆದೊಯ್ಯಲಾಗುವುದು.’ ”</verse>
			</chapter>
			<chapter number="8">
				<verse number="1">ಸಾರ್ವಭೌಮ ಯೆಹೋವ ದೇವರು ನನಗೆ ಮಾಗಿದ ಹಣ್ಣುಗಳುಳ್ಳ ಬುಟ್ಟಿ ತೋರಿಸಿದರು.</verse>
				<verse number="2">ಆಗ, “ಆಮೋಸನೇ, ಏನು ನೋಡುತ್ತಿರುವೆ?” ಎಂದು ಕೇಳಿದರು. ನಾನು, “ಮಾಗಿದ ಹಣ್ಣುಗಳ ಬುಟ್ಟಿ,” ಎಂದೆನು. ಆಗ ಯೆಹೋವ ದೇವರು ನನಗೆ, “ನನ್ನ ಜನರಾದ ಇಸ್ರಾಯೇಲರ ಸಮಯವು ಮಾಗುತ್ತಾ ಬಂತು. ನಾನು ಇನ್ನು ಮೇಲೆ ಅವರನ್ನು ಉಳಿಸುವುದಿಲ್ಲ,” ಎಂದು ಹೇಳಿದರು.</verse>
				<verse number="3">“ಆ ದಿನದಲ್ಲಿ ದೇವಾಲಯದ ಹಾಡುಗಳು ವಿಲಾಪವಾಗುವುವು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. “ಎಲ್ಲಾ ಕಡೆಗಳಲ್ಲಿ ಅನೇಕ ಹೆಣಗಳು ಬಿದ್ದಿರುವುವು. ಮೌನವಾಗಿರಿ!”</verse>
				<verse number="4">ಬಡವರನ್ನು ನುಂಗುವವರೇ, ನಾಡಿನ ಬಡವರನ್ನು ಮುಗಿಸಿಬಿಡಬೇಕೆಂದಿರುವವರೇ, ಇದನ್ನು ಕೇಳಿರಿ.</verse>
				<verse number="5">ನೀವು ಹೇಳುವುದೇನೆಂದರೆ, “ನಾವು ಧಾನ್ಯವನ್ನು ಮಾರುವ ಹಾಗೆ ಅಮಾವಾಸ್ಯೆಯು ಯಾವಾಗ ಕೊನೆಗೊಳ್ಳುತ್ತದೆ? ಗೋಧಿಯನ್ನು ಮಾರುವ ಹಾಗೆ ಸಬ್ಬತ್ ದಿನವು ಯಾವಾಗ ಮುಗಿಯುವುದು? ಕೊಳಗವನ್ನು ಚಿಕ್ಕದಾಗಿಯೂ ತೊಲಗಳನ್ನು ದೊಡ್ಡದಾಗಿಯೂ, ಕಳ್ಳತಕ್ಕಡಿಗಳನ್ನು ಮೋಸಕ್ಕಾಗಿಯೂ ಮಾಡೋಣವೆಂದೂ,</verse>
				<verse number="6">ಬಡವರನ್ನು ಬೆಳ್ಳಿಗೂ ದರಿದ್ರರನ್ನು ಕೆರಗಳ ಜೋಡಿಗೂ ಕೊಂಡುಕೊಳ್ಳುವೆವು, ಹೌದು ಗೋಧಿಯ ಕಸವನ್ನು ಸಹ ಮಾರೋಣ.”</verse>
				<verse number="7">ಯೆಹೋವ ದೇವರು ಯಾಕೋಬಿನ ಅಹಂಕಾರದ ಮೇಲೆ ಆಣೆ ಇಟ್ಟುಕೊಂಡು ಹೇಳುವುದೇನೆಂದರೆ: “ನಿಶ್ಚಯವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವುದಿಲ್ಲ.</verse>
				<verse number="8">“ಇದಕ್ಕಾಗಿ ದೇಶವು ನಡುಗುವುದಿಲ್ಲವೇ? ಅದರಲ್ಲಿ ವಾಸಿಸುವವರೆಲ್ಲರೂ ಗೋಳಾಡುವುದಿಲ್ಲವೇ? ದೇಶವೆಲ್ಲಾ ನೈಲ್ ನದಿಯ ಪ್ರವಾಹದಂತೆ ಉಬ್ಬಿ ಅಲ್ಲೊಲಕಲ್ಲೋಲವಾಗುವುದು, ಈಜಿಪ್ಟಿನ ನದಿಯಂತೆ ಇಳಿದುಹೋಗುವದು.</verse>
				<verse number="9">“ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ, “ಆ ದಿನದಲ್ಲಿ,” ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡುತ್ತೇನೆ.</verse>
				<verse number="10">ನಿಮ್ಮ ಹಬ್ಬಗಳನ್ನು ದುಃಖಕ್ಕೂ, ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು. ಎಲ್ಲರೂ ಸೊಂಟಗಳಿಗೆ ಗೋಣಿತಟ್ಟನ್ನು ಕಟ್ಟಿಕೊಂಡು, ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು. ಒಬ್ಬನೇ ಮಗನಿಗಾಗಿ ಗೋಳಾಡುವ ಸಮಯದಂತೆ ಮಾಡುವೆನು. ಅದರ ಅಂತ್ಯವು ಕಹಿಯಾದ ದಿನದಂತಿರುವುದು.</verse>
				<verse number="11">ದಿನಗಳು ಬರುವುವು, ಆಗ ನಾನು ದೇಶದಲ್ಲಿ ಕ್ಷಾಮವನ್ನು ಕಳುಹಿಸುವೆನು. ಅದು ರೊಟ್ಟಿಯ ಕ್ಷಾಮವಲ್ಲ, ನೀರಿನ ದಾಹದ ಬರವಲ್ಲ. ಯೆಹೋವ ದೇವರ ವಾಕ್ಯಗಳನ್ನು ಕೇಳಬೇಕೆಂಬ ಕ್ಷಾಮವನ್ನೇ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾನೆ.</verse>
				<verse number="12">ಆಗ ಅವರು ಸಮುದ್ರದಿಂದ ಸಮುದ್ರಕ್ಕೂ, ಉತ್ತರದಿಂದ ಪೂರ್ವಕ್ಕೂ ಅಲೆದು ಯೆಹೋವ ದೇವರ ವಾಕ್ಯವನ್ನು ಹುಡುಕುವುದಕ್ಕೆ ಅತ್ತಿತ್ತ ಓಡಾಡಿ, ಅದನ್ನು ಕಾಣದೆ ಹೋಗುವರು.</verse>
				<verse number="13">“ಆ ದಿನದಲ್ಲಿ, “ಸೌಂದರ್ಯವತಿಯರಾದ ಕನ್ಯೆಯರು ಮತ್ತು ಯೌವನಸ್ಥರು ಸಹ ದಾಹದಿಂದ ಕುಗ್ಗಿ ಹೋಗುವರು.</verse>
				<verse number="14">ಅವರು ಸಮಾರ್ಯದ ಪಾಪದ ಮೇಲೆ ಆಣೆ ಇಟ್ಟುಕೊಂಡು, ದಾನೇ, ನಿನ್ನ ದೇವರ ಜೀವದಾಣೆ ಎಂದೂ, ಬೇರ್ಷೆಬದ ಮಾರ್ಗದ ಜೀವದಾಣೆ ಎಂದೂ ಹೇಳುವರು. ಅವರು ಬಿದ್ದು ಮತ್ತೆ ಮೇಲೆ ಏಳಲಾರರು.”</verse>
			</chapter>
			<chapter number="9">
				<verse number="1">ಕರ್ತದೇವರು ಬಲಿಪೀಠದ ಪಕ್ಕದಲ್ಲಿ ನಿಂತಿರುವುದನ್ನು ನಾನು ಕಂಡೆನು. ಅವರು ಹೇಳಿದ್ದೇನೆಂದರೆ: “ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು, ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದುಬಿಡು. ಅವರಲ್ಲಿ ಉಳಿದವರನ್ನು ಖಡ್ಗದಿಂದ ಕೊಲ್ಲುವೆನು. ಅವರಲ್ಲಿ ಓಡಿಹೋಗುವವನು ಓಡಿಹೋಗಲಾಗುವುದಿಲ್ಲ.</verse>
				<verse number="2">ಅವರು ಪಾತಾಳದವರೆಗೂ ಅಗೆದುಕೊಂಡು ಹೋದರೂ, ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವುದು. ಅವರು ಆಕಾಶಕ್ಕೆ ಏರಿಹೋದರೂ, ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು.</verse>
				<verse number="3">ಅವರು ಕರ್ಮೆಲಿನ ಬೆಟ್ಟದ ತುದಿಯಲ್ಲಿ ಅಡಗಿಕೊಂಡರೂ, ನಾನು ಅವರನ್ನು ಹುಡುಕಿ, ಅಲ್ಲಿಂದ ತೆಗೆಯುವೆನು. ಅವರು ನನ್ನ ದೃಷ್ಟಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ, ಸರ್ಪಕ್ಕೆ ಅಪ್ಪಣೆಕೊಟ್ಟು, ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.</verse>
				<verse number="4">ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋಗಿದ್ದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಕೊಲ್ಲುವುದು. “ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.”</verse>
				<verse number="5">ಸೇನಾಧೀಶ್ವರ ಯೆಹೋವ ದೇವರಾದ ಕರ್ತರೇ, ನೀವು ದೇಶವನ್ನು ಮುಟ್ಟಿದ ಮಾತ್ರಕ್ಕೆ ಅದು ಕರಗಿ ಹೋಗುವುದು. ಅದರಲ್ಲಿ ವಾಸವಾಗಿರುವವರೆಲ್ಲರೂ ಗೋಳಾಡುವರು. ಅವೆಲ್ಲಾ ನೈಲ್ ನದಿಯ ಹಾಗೆ ಪ್ರವಾಹದಂತೆ ಉಕ್ಕಿ, ಈಜಿಪ್ಟಿನ ಪ್ರವಾಹದಂತೆ ಉಕ್ಕಿ ಮುಳುಗಿ ಹೋಗುವುದು.</verse>
				<verse number="6">ಆಕಾಶದಲ್ಲಿ ಉಪ್ಪರಿಗೆಗಳನ್ನು ಕಟ್ಟಿಕೊಂಡು, ಭೂಮಿಯ ಮೇಲೆ ತಮ್ಮ ತಂಡಗಳನ್ನು ಸ್ಥಾಪಿಸಿ, ಸಮುದ್ರದ ನೀರನ್ನು ಕರೆದು, ಅದನ್ನು ಭೂಮಿಯ ಮೇಲೆ ಹೊಯ್ಯುವಂತೆ ಮಾಡುವಾತರು ಅವರೇ. ಅವರ ಹೆಸರು ಯೆಹೋವ ದೇವರು.</verse>
				<verse number="7">“ಇಸ್ರಾಯೇಲರೇ, ನೀವು ನನಗೆ ಕೂಷ್ಯರ ಮಕ್ಕಳ ಹಾಗಲ್ಲವೇ? ನಾನು ನಿಮ್ಮನ್ನು ಈಜಿಪ್ಟಿನಿಂದಲೂ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ ಅರಾಮ್ಯರನ್ನು ಕೀರಿನಿಂದಲೂ ತರಲಿಲ್ಲವೇ?” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="8">“ಸಾರ್ವಭೌಮ ಯೆಹೋವ ದೇವರ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲೆ ಇವೆ. ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋಬಿನ ಮನೆತನದವರನ್ನು ನಾನು ನಿಜವಾಗಿ ನಾಶಮಾಡುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="9">ಧಾನ್ಯವನ್ನು ಜರಡಿಯಲ್ಲಿ ಜಾಲಿಸುವಂತೆ ನಾನು ಇಸ್ರಾಯೇಲರನ್ನು ಎಲ್ಲಾ ಜನಾಂಗಗಳಲ್ಲಿ ಹಾಕಿ ಜಾಲಿಸಬೇಕೆಂದು ಆಜ್ಞಾಪಿಸುವೆನು. ಆದರೂ ಒಂದು ಕಾಳಾದರೂ ನೆಲಕ್ಕೆ ಬೀಳುವುದಿಲ್ಲ.</verse>
				<verse number="10">ಕೇಡು ನಮ್ಮನ್ನು ಹಿಂದಟ್ಟದು ಮತ್ತು ನಮ್ಮನ್ನು ತಡೆಯುವದೂ ಇಲ್ಲ, ಎನ್ನುವ ನನ್ನ ಜನರಲ್ಲಿರುವ ಪಾಪಿಗಳೆಲ್ಲರೂ ಖಡ್ಗದಿಂದ ಸಾಯುವರು.</verse>
				<verse number="11">ಆ ದಿನದಲ್ಲಿ, ಬಿದ್ದುಹೋದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಮುರಿದ ಗೋಡೆಗಳನ್ನು ಸರಿಪಡಿಸುತ್ತೇನೆ. ಮತ್ತು ಅದರ ಅವಶೇಷಗಳನ್ನು ಪುನಃಸ್ಥಾಪಿಸಿ ಮತ್ತು ಅದನ್ನು ಮೊದಲಿನಂತೆ ಪುನಃ ನಿರ್ಮಿಸುವೆನು.</verse>
				<verse number="12">ಆಗ ಅವರು ಎದೋಮಿನ ಮಿಕ್ಕ ಭಾಗವನ್ನೂ, ನನ್ನ ಹೆಸರಿನಿಂದ ಕರೆಯಲಾಗುವ ಎಲ್ಲಾ ಜನಾಂಗಗಳನ್ನೂ ಸ್ವಾಧೀನ ಮಾಡಿಕೊಳ್ಳುವೆನು, ಎಂಬುದಾಗಿ ಇದನ್ನು ಮಾಡುವವರಾದ ಯೆಹೋವ ದೇವರು ಹೇಳುತ್ತಾರೆ.</verse>
				<verse number="13">ಯೆಹೋವ ದೇವರು ಹೇಳುವುದೇನೆಂದರೆ: “ದಿನಗಳು ಬರುವುವು,” “ಆಗ ಉಳುವವನು ಕೊಯ್ಯುವವನನ್ನೂ, ದ್ರಾಕ್ಷಿ ಮಾರುವವನು ಬೀಜ ಹಾಕುವವನನ್ನೂ ಹಿಂದಟ್ಟುವರು. ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವುವು, ಗುಡ್ಡಗಳೆಲ್ಲಾ ಕರಗುವುವು.</verse>
				<verse number="14">ನನ್ನ ಜನರಾದ ಇಸ್ರಾಯೇಲರನ್ನು ಸೆರೆಯಿಂದ ತಿರುಗಿ ಬರಮಾಡುವೆನು. “ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು. ದ್ರಾಕ್ಷಿತೋಟಗಳನ್ನು ನೆಟ್ಟು, ಅವುಗಳ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.</verse>
				<verse number="15">ನಾನು ಇಸ್ರಾಯೇಲರನ್ನು ಅವರ ದೇಶದಲ್ಲಿ ನೆಡುವೆನು. ನಾನು ಅವರಿಗೆ ಕೊಟ್ಟಿರುವ ದೇಶದಿಂದ ಇನ್ನು ಮುಂದೆ ಯಾರೂ ಅವರನ್ನು ಕಿತ್ತುಹಾಕರು,” ಎಂದು ನಿಮ್ಮ ದೇವರಾದ ಯೆಹೋವ ದೇವರು ಹೇಳುತ್ತಾರೆ.</verse>
			</chapter>
		</book>
		<book number="31">
			<chapter number="1">
				<verse number="1">ಓಬದ್ಯನ ದರ್ಶನವು. ಸಾರ್ವಭೌಮ ಯೆಹೋವ ದೇವರು ಎದೋಮನ್ನು ಕುರಿತು ಹೀಗೆ ಹೇಳುತ್ತಾರೆ: ಯೆಹೋವ ದೇವರಿಂದ ಸುದ್ದಿಯನ್ನು ಕೇಳಿದ್ದೇವೆ. ಅವರು ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾರೆ: “ಏಳಿರಿ, ಅದಕ್ಕೆ ವಿರೋಧವಾಗಿ ಯುದ್ಧಕ್ಕೆ ಹೋಗೋಣ!”</verse>
				<verse number="2">“ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿ ಮಾಡಿದ್ದೇನೆ. ನೀನು ಬಹು ತಾತ್ಸಾರಕ್ಕೆ ಗುರಿಯಾಗುವೆ.</verse>
				<verse number="3">ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸಮಾಡಿಕೊಂಡವನೇ, ‘ಯಾರು ನನ್ನನ್ನು ನೆಲಕ್ಕೆ ಇಳಿಸಬಲ್ಲವರು?’ ಎಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.</verse>
				<verse number="4">ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="5">“ನಿನ್ನಲ್ಲಿ ಕಳ್ಳರಾಗಲಿ, ರಾತ್ರಿಯಲ್ಲಿ ಪಂಜುಗಳ್ಳರಾಗಲಿ ಬಂದರೆ ಅವರು ತಮಗೆ ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುತ್ತಿದ್ದರಲ್ಲವೆ? ದ್ರಾಕ್ಷಿ ಕೀಳುವವರು ನಿಮ್ಮ ಬಳಿಗೆ ಬಂದರೆ ಸ್ವಲ್ಪ ದ್ರಾಕ್ಷಿಯನ್ನು ಬಿಡುವುದಿಲ್ಲವೇ?</verse>
				<verse number="6">ಆದರೆ ಏಸಾವಿನ ಆಸ್ತಿಯು ಸಂಪೂರ್ಣ ನಾಶವಾಗಿ ಅದರ ನಿಗೂಢ ನಿಕ್ಷೇಪಗಳು ಸೂರೆಯಾಗಿವೆ.</verse>
				<verse number="7">ನಿನ್ನ ಸಂಗಡ ಒಡಂಬಟ್ಟ ಮನುಷ್ಯರೆಲ್ಲರು ನಿನ್ನನ್ನು ಮೇರೆಯವರೆಗೂ ತಂದಿದ್ದಾರೆ. ನಿನ್ನ ಸಂಗಡ ಸಮಾಧಾನವಾಗಿದ್ದ ಮನುಷ್ಯರು ನಿನ್ನನ್ನು ಮೋಸಮಾಡಿ ನಿನ್ನ ಮೇಲೆ ಜಯ ಹೊಂದಿದ್ದಾರೆ. ನಿನ್ನ ರೊಟ್ಟಿಯನ್ನು ತಿನ್ನುವವರು ನಿನ್ನ ಕೆಳಗೆ ಬೋನು ಇಟ್ಟಿದ್ದಾರೆ. ಆದರೆ ನೀನು ಅದನ್ನು ತಿಳಿದುಕೊಳ್ಳಲಾರೆ.</verse>
				<verse number="8">“ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಆ ದಿವಸದಲ್ಲಿ,’ ಎದೋಮಿನೊಳಗಿಂದ ಜ್ಞಾನಿಗಳನ್ನೂ ಏಸಾವನ ಬೆಟ್ಟದೊಳಗಿಂದ ವಿವೇಕವನ್ನೂ ನಾಶಮಾಡದಿರುವೆನೇ?</verse>
				<verse number="9">ಸರ್ವರು ಸಂಹಾರದಿಂದ ಏಸಾವನ ಬೆಟ್ಟದೊಳಗಿಂದ ನಾಶವಾಗುವ ಹಾಗೆ ತೇಮಾನೇ, ನಿನ್ನ ಪರಾಕ್ರಮಶಾಲಿಗಳು ಗಾಬರಿಪಡುವರು.</verse>
				<verse number="10">ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಹಿಂಸಾಕೃತ್ಯಗಳ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚುವುದು. ನೀನು ಎಂದೆಂದಿಗೂ ನಾಶವಾಗಿ ಹೋಗುವೆ.</verse>
				<verse number="11">ನೀನು ಪ್ರತ್ಯೇಕವಾಗಿ ಎದುರು ನಿಂತ ದಿವಸದಲ್ಲಿ ಪರರು ಅವನ ಸೊತ್ತನ್ನು ತೆಗೆದುಕೊಂಡು ಹೋದ ದಿವಸದಲ್ಲಿ ಪರಕೀಯರು ಅವನ ಬಾಗಿಲುಗಳಲ್ಲಿ ಪ್ರವೇಶಿಸಿ, ಯೆರೂಸಲೇಮಿನ ಸೊತ್ತಿಗಾಗಿ ಚೀಟು ಹಾಕಿದಾಗ ನೀನೂ ಅವರಲ್ಲಿ ಒಬ್ಬನ ಹಾಗಿದ್ದೆ.</verse>
				<verse number="12">ನಿನ್ನ ಸಹೋದರನ ವಿಪತ್ತಿನ ದಿನದಲ್ಲಿ ನೀನು ಅವನನ್ನು ಕೀಳು ದೃಷ್ಟಿಯಿಂದ ನೋಡಬಾರದಾಗಿತ್ತು. ಯೆಹೂದದ ಜನರು ನಾಶವಾದಾಗ ನೀನು ಸಂತೋಷಪಡಬಾರದಿತ್ತು. ಅವರ ಕಷ್ಟದ ದಿವಸದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು;</verse>
				<verse number="13">ನನ್ನ ಜನರ ಆಪತ್ತಿನ ದಿವಸದಲ್ಲಿ ಅವರ ದ್ವಾರಗಳ ಮೂಲಕ ಪ್ರವೇಶಿಸಬಾರದಿತ್ತು. ಹೌದು, ನೀನು ಅವರ ಆಪತ್ತಿನ ದಿವಸದಲ್ಲಿ ಅವರನ್ನು ಕೀಳು ದೃಷ್ಟಿಯಿಂದ ನೋಡಬಾರದಾಗಿತ್ತು. ಅವರ ಆಪತ್ತಿನ ದಿವಸದಲ್ಲಿ ಅವರ ಆಸ್ತಿಯ ಮೇಲೆ ಕೈ ಹಾಕಬಾರದಾಗಿತ್ತು.</verse>
				<verse number="14">ಅವರಲ್ಲಿ ಓಡಿಹೋದವರನ್ನು ಕಡಿದುಬಿಡುವುದಕ್ಕೆ ನೀನು ಕೂಡುವ ದಾರಿಯಲ್ಲಿ ನಿಲ್ಲಬಾರದಾಗಿತ್ತು. ಕಷ್ಟದ ದಿವಸದಲ್ಲಿ ಅವರಲ್ಲಿ ಉಳಿದುಕೊಂಡವರನ್ನು ಹಿಡಿದುಕೊಡಬಾರದಾಗಿತ್ತು.</verse>
				<verse number="15">“ಯೆಹೋವ ದೇವರ ದಿವಸವು ಎಲ್ಲಾ ಜನಾಂಗಗಳ ಮೇಲೆ ಸಮೀಪವಾಗಿದೆ. ನೀನು ಮಾಡಿದ ಹಾಗೆಯೇ ನಿನಗೂ ಮಾಡಲಾಗುವುದು. ನಿನ್ನ ಕಾರ್ಯಗಳು ನಿನ್ನ ತಲೆಯ ಮೇಲೆ ತಿರುಗುವುವು.</verse>
				<verse number="16">ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ, ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವುವು. ಹೌದು, ಕುಡಿದು ಎಂದೂ ಇಲ್ಲದವರ ಹಾಗೆ ಆಗುವುದು.</verse>
				<verse number="17">ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವುದು. ಅದು ಪರಿಶುದ್ಧವಾಗಿರುವುದು. ಯಾಕೋಬನ ಮನೆತನದವರು ತಮ್ಮ ಸೊತ್ತನ್ನು ಮರಳಿ ಅನುಭವಿಸುವರು.</verse>
				<verse number="18">ಯಾಕೋಬನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಂತೆ ಧಗಧಗನೆ ದಹಿಸಿ ನಾಶವಾಗುವರು. ಏಸಾವನ ಮನೆತನದವರಲ್ಲಿ ಯಾರೂ ಉಳಿಯರು.” ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.</verse>
				<verse number="19">ದಕ್ಷಿಣದವರು ಏಸಾವನ ಬೆಟ್ಟವನ್ನೂ ಬಯಲಿನವರು ಫಿಲಿಷ್ಟಿಯರ ದೇಶವನ್ನೂ ಸ್ವತಂತ್ರಿಸಿಕೊಳ್ಳುವರು. ಎಫ್ರಾಯೀಮಿನ ಹೊಲಗಳನ್ನು ಸಮಾರ್ಯದ ಹೊಲಗಳನ್ನು ಸಹ ಸ್ವಾಧೀನಮಾಡಿಕೊಳ್ಳುವರು ಬೆನ್ಯಾಮೀನನು ಗಿಲ್ಯಾದನ್ನು ವಶಪಡಿಸಿಕೊಳ್ಳುವನು.</verse>
				<verse number="20">ಚಾರೆಪತಿನವರೆಗೂ ಇರುವ ಪ್ರದೇಶವನ್ನು ಕಾನಾನ್ಯರಲ್ಲಿರುವ ಇಸ್ರಾಯೇಲ್ ಸೆರೆವಾಸಿಗಳು ವಶಪಡಿಸಿಕೊಳ್ಳುವರು. ಸೆಫಾರದಿನಲ್ಲಿರುವ ಯೆರೂಸಲೇಮಿನ ಸೆರೆಯವರು ದಕ್ಷಿಣದ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳುವರು.</verse>
				<verse number="21">ರಕ್ಷಕನು ಏಸಾವಿನ ಪರ್ವತವನ್ನು ಆಳಲು ಚೀಯೋನ್ ಪರ್ವತವನ್ನು ಏರುವನು. ಆಗ ರಾಜ್ಯವು ಯೆಹೋವ ದೇವರದಾಗಿರುವುದು.</verse>
			</chapter>
		</book>
		<book number="32">
			<chapter number="1">
				<verse number="1">ಯೆಹೋವ ದೇವರ ವಾಕ್ಯವು ಅಮಿತ್ತೈಯನ ಮಗ ಯೋನನಿಗೆ ಬಂದಿತು:</verse>
				<verse number="2">“ನೀನು ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಪ್ರಸಂಗಿಸು, ಏಕೆಂದರೆ ಅವರ ಕೆಟ್ಟತನವು ನನ್ನ ಮುಂದೆ ಏರಿ ಬಂದಿದೆ,” ಎಂಬುದು.</verse>
				<verse number="3">ಆದರೆ ಯೋನನು ಯೆಹೋವ ದೇವರ ಸಮ್ಮುಖದಿಂದ ತಾರ್ಷೀಷಿಗೆ ಓಡಿಹೋಗುವುದಕ್ಕೆ ಎದ್ದು, ಯೊಪ್ಪಕ್ಕೆ ಇಳಿದು ತಾರ್ಷೀಷಿಗೆ ಹೋಗುವ ಹಡಗನ್ನು ಕಂಡು, ಪ್ರಯಾಣದ ದರವನ್ನು ಕೊಟ್ಟು, ಯೆಹೋವ ದೇವರ ಸಮ್ಮುಖದಿಂದ ತಪ್ಪಿಸಿಕೊಂಡು ಹೋಗಲು, ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ತಾರ್ಷೀಷಿಗೆ ಹೋಗುವುದಕ್ಕೆ ಅದನ್ನು ಹತ್ತಿದನು.</verse>
				<verse number="4">ಆದರೆ ಯೆಹೋವ ದೇವರು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದರು. ಸಮುದ್ರದಲ್ಲಿ ಮಹಾ ಬಿರುಗಾಳಿ ಉಂಟಾಗಿ, ಹಡಗು ಒಡೆಯುವುದರಲ್ಲಿತ್ತು.</verse>
				<verse number="5">ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ, ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸರಕುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಇಳಿದು ಹೋಗಿ, ಮಲಗಿಕೊಂಡು ಗಾಢ ನಿದ್ರೆಯಲ್ಲಿದ್ದನು.</verse>
				<verse number="6">ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು, “ನೀನು ನಿದ್ರೆ ಮಾಡುವುದೇಕೆ? ಎದ್ದು ನಿನ್ನ ದೇವರನ್ನು ಪ್ರಾರ್ಥಿಸು. ಒಂದು ವೇಳೆ ನಿನ್ನ ದೇವರು ನಮ್ಮ ಮೇಲೆ ಲಕ್ಷ್ಯವಿಟ್ಟು, ನಾವು ನಾಶವಾಗದಂತೆ ಕಾಪಾಡಿಯಾರು!” ಎಂದನು.</verse>
				<verse number="7">ಆಗ ನಾವಿಕರು ಒಬ್ಬರಿಗೊಬ್ಬರು, “ಬನ್ನಿ, ಚೀಟುಗಳನ್ನು ಹಾಕೋಣ. ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ,” ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟುಗಳನ್ನು ಹಾಕಿದಾಗ, ಯೋನನ ಮೇಲೆ ಚೀಟು ಬಿತ್ತು.</verse>
				<verse number="8">ಆಗ ಅವರು ಅವನಿಗೆ, “ನಮಗಾಗಿ ಈ ಕಷ್ಟವನ್ನೆಲ್ಲಾ ಉಂಟುಮಾಡಿದ್ದಕ್ಕೆ ಯಾರು ಜವಾಬ್ದಾರರೆಂದು ನಮಗೆ ತೋರಿಸು. ನಿನ್ನ ಕೆಲಸವೇನು? ಎಲ್ಲಿಂದ ಬಂದೆ? ನಿನ್ನ ದೇಶ ಯಾವುದು? ನೀನು ಯಾವ ಜನಾಂಗದವನು?” ಎಂದು ಪ್ರಶ್ನಿಸಿದರು.</verse>
				<verse number="9">ಅವನು ಅವರಿಗೆ, “ನಾನು ಹಿಬ್ರಿಯನು. ಸಮುದ್ರವನ್ನೂ, ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರಲೋಕದ ದೇವರಾದ ಯೆಹೋವ ದೇವರಿಗೆ ನಾನು ಆರಾಧಿಸುವವನಾಗಿದ್ದೇನೆ,” ಎಂದು ಹೇಳಿದನು.</verse>
				<verse number="10">ಆಗ ಆ ಮನುಷ್ಯರು ಬಹಳ ಭಯಪಟ್ಟು, “ನೀನು ಏನು ಮಾಡಿದ್ದೀ?” ಎಂದು ಅವನನ್ನು ಕೇಳಿದರು. ಏಕೆಂದರೆ ಯೆಹೋವ ದೇವರ ಸಮ್ಮುಖದಿಂದ ಅವನು ಓಡಿ ಹೋಗುತ್ತಿದ್ದಾನೆಂದು ಆ ಮನುಷ್ಯರಿಗೆ ತಿಳಿದಿತ್ತು. ಏಕೆಂದರೆ ಅವನೇ ಇದನ್ನು ಅವರಿಗೆ ಹೇಳಿದ್ದನು.</verse>
				<verse number="11">ಆಗ ಬಿರುಗಾಳಿ ಮತ್ತಷ್ಟು ತೀವ್ರಗೊಳ್ಳುತ್ತಿತ್ತು. ನಾವಿಕರು ಯೋನನಿಗೆ, “ಸಮುದ್ರ ಶಾಂತವಾಗಬೇಕಾದರೆ, ನಿನ್ನನ್ನು ಏನು ಮಾಡಬೇಕು? ಹೇಳು,” ಎಂದು ಕೇಳಿದರು.</verse>
				<verse number="12">ಅವನು ಅವರಿಗೆ, “ನನ್ನನ್ನು ಎತ್ತಿ ಸಮುದ್ರದಲ್ಲಿ ಹಾಕಿರಿ, ಆಗ ಸಮುದ್ರವು ಶಾಂತವಾಗುವುದು. ಏಕೆಂದರೆ ನನ್ನ ನಿಮಿತ್ತ ಈ ದೊಡ್ಡ ಬಿರುಗಾಳಿ, ನಿಮ್ಮ ಮೇಲೆ ಬಂತೆಂದು ಬಲ್ಲೆನು,” ಎಂದನು.</verse>
				<verse number="13">ಆದರೂ ಆ ಮನುಷ್ಯರು ದಡಕ್ಕೆ ತಿರುಗಿಕೊಳ್ಳುವ ಹಾಗೆ ಬಲವಾಗಿ ಹುಟ್ಟುಹಾಕಿದರು. ಆದರೆ ಅವರಿಂದಾಗದೆ ಹೋಯಿತು. ಏಕೆಂದರೆ ಸಮುದ್ರವು ಅವರಿಗೆ ಎದುರಾಗಿ, ಹೆಚ್ಚೆಚ್ಚಾಗಿ ತೆರೆಗಳಿಂದ ರೋಷಗೊಂಡಿತು.</verse>
				<verse number="14">ಆಗ ಅವರು ಯೆಹೋವ ದೇವರಿಗೆ ಕೂಗಿ, “ಯೆಹೋವ ದೇವರೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ. ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡಿರಿ. ಯೆಹೋವ ದೇವರೇ, ಇದೆಲ್ಲವೂ ಸಂಭವಿಸಿರುವುದು ನಿಮ್ಮ ಚಿತ್ತವಲ್ಲವೇ?” ಎಂದು ಹೇಳಿದರು.</verse>
				<verse number="15">ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು. ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿಬಿಟ್ಟಿತು.</verse>
				<verse number="16">ಆಗ ಆ ಜನರು, ಯೆಹೋವ ದೇವರಿಗೆ ಬಹಳವಾಗಿ ಭಯಪಟ್ಟು, ಅವರಿಗೆ ಬಲಿ ಅರ್ಪಿಸಿ, ಹರಕೆಗಳನ್ನು ಸಲ್ಲಿಸಿದರು.</verse>
				<verse number="17">ಆದರೆ ಯೆಹೋವ ದೇವರು ಯೋನನನ್ನು ನುಂಗುವಂತೆ ದೊಡ್ಡ ಮೀನನ್ನು ಸಿದ್ಧಮಾಡಿದ್ದರು. ಯೋನನು ಆ ಮೀನಿನ ಹೊಟ್ಟೆಯಲ್ಲಿ ಮೂರು ಹಗಲು ಮತ್ತು ಮೂರು ರಾತ್ರಿ ಇದ್ದನು.</verse>
			</chapter>
			<chapter number="2">
				<verse number="1">ಆಗ ಯೋನನು ಮೀನಿನ ಹೊಟ್ಟೆಯೊಳಗಿಂದ ತನ್ನ ದೇವರಾದ ಯೆಹೋವ ದೇವರಿಗೆ ಪ್ರಾರ್ಥನೆಮಾಡಿದನು.</verse>
				<verse number="2">ಅವನು ಹೀಗೆ ಹೇಳಿದನು: “ನಾನು ನನ್ನ ವ್ಯಥೆಯಲ್ಲಿ ಯೆಹೋವ ದೇವರಿಗೆ ಮೊರೆಯಿಟ್ಟೆನು. ಅವರು ನನ್ನ ಕೂಗನ್ನು ಕೇಳಿದರು. ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ನಾನು ಕೂಗಿದೆನು, ಆಗ ನನ್ನ ಕರೆಯನ್ನು ನೀವು ಕೇಳಿದಿರಿ.</verse>
				<verse number="3">ನನ್ನನ್ನು ನೀವು ಅಗಾಧದಲ್ಲಿಯೂ, ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿರಿ. ಪ್ರವಾಹಗಳು ನನ್ನನ್ನು ಸುತ್ತಿಕೊಂಡವು. ನಿಮ್ಮ ಎಲ್ಲಾ ಅಲೆಗಳೂ ನಿಮ್ಮ ತೆರೆಗಳೂ ನನ್ನ ಮೇಲೆ ದಾಟಿಹೋದವು.</verse>
				<verse number="4">ಆಗ ನಾನು ಹೇಳಿದ್ದು, ‘ನಿಮ್ಮ ಕಣ್ಣುಗಳ ಎದುರಿನಿಂದ ಬಹಿಷ್ಕೃತನಾಗಿದ್ದೇನೆ. ಆದರೂ ನಾನು ನಿಮ್ಮ ಪರಿಶುದ್ಧ ಮಂದಿರದ ಕಡೆಗೆ ಪುನಃ ನೋಡುವೆನು.’</verse>
				<verse number="5">ನನ್ನನ್ನು ಸುತ್ತುತ್ತಿದ್ದ ನೀರು, ನನ್ನನ್ನು ಭಯಪಡಿಸಿತು. ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು. ಜಂಬು ಹುಲ್ಲು ನನ್ನ ತಲೆಗೆ ಸುತ್ತಲಾಗಿತ್ತು.</verse>
				<verse number="6">ಬೆಟ್ಟಗಳ ಅಡಿಗಳ ಪರ್ಯಂತರ ಇಳಿದು ಹೋದೆನು. ಕೆಳಗಿನ ಭೂಮಿಯು ನನ್ನನ್ನು ಶಾಶ್ವತವಾಗಿ ನಿರ್ಬಂಧಿಸಿತು. ಆದರೂ ದೇವರಾದ ನನ್ನ ಯೆಹೋವ ದೇವರೇ, ನೀವು ನನ್ನ ಪ್ರಾಣವನ್ನು ತಗ್ಗಿನಿಂದ ಮೇಲಕ್ಕೆ ಎಬ್ಬಿಸಿದ್ದೀರಿ.</verse>
				<verse number="7">“ನನ್ನ ಪ್ರಾಣವು ನನ್ನಲ್ಲಿ ಕುಂದಿ ಹೋದಾಗ, ಯೆಹೋವ ದೇವರೇ ನಿಮ್ಮನ್ನು ಜ್ಞಾಪಕಮಾಡಿಕೊಂಡೆನು. ನನ್ನ ಪ್ರಾರ್ಥನೆಯು ನಿಮ್ಮ ಬಳಿಗೆ ನಿಮ್ಮ ಪರಿಶುದ್ಧ ಮಂದಿರದೊಳಗೆ ಬಂದಿತು.</verse>
				<verse number="8">“ನಿರುಪಯೋಗ ಮೂರ್ತಿಗಳಿಗೆ ಅಂಟಿಕೊಳ್ಳುವವರು, ಅವರದಾಗುವ ದೇವರ ಪ್ರೀತಿಯನ್ನು ಕಳೆದುಕೊಳ್ಳುವರು.</verse>
				<verse number="9">ಆದರೆ ನಾನು ಸ್ತೋತ್ರದ ಗೀತೆಯಿಂದ ನಿಮಗೆ ಬಲಿ ಅರ್ಪಿಸುವೆನು. ನಾನು ಮಾಡಿದ ಹರಕೆಯನ್ನು ತೀರಿಸುವೆನು. ಆಗ ನಾನು, ‘ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು,’ ಎಂದು ಹೇಳಿದನು.”</verse>
				<verse number="10">ಆಗ ಯೆಹೋವ ದೇವರು ಮೀನಿಗೆ ಹೇಳಿದ್ದರಿಂದ, ಅದು ಯೋನನನ್ನು ಒಣಭೂಮಿಯ ಮೇಲೆ ಕಾರಿಬಿಟ್ಟಿತು.</verse>
			</chapter>
			<chapter number="3">
				<verse number="1">ಯೆಹೋವ ದೇವರ ವಾಕ್ಯವು ಎರಡನೆಯ ಸಾರಿ ಯೋನನಿಗೆ ಬಂದಿತು.</verse>
				<verse number="2">“ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ, ನಾನು ನಿನಗೆ ಹೇಳಿದ ಸಂದೇಶವನ್ನು ಅದರ ನಿವಾಸಿಗಳಿಗೆ ಸಾರು,” ಎಂದು ಹೇಳಿದರು.</verse>
				<verse number="3">ಹೀಗೆ ಯೋನನು ಯೆಹೋವ ದೇವರ ಮಾತಿಗೆ ವಿಧೇಯನಾಗಿ ನಿನೆವೆಗೆ ಹೋದನು. ನಿನೆವೆಯು ಮೂರು ದಿವಸದ ಪ್ರಯಾಣದ ಮಹಾ ದೊಡ್ಡ ಪಟ್ಟಣವಾಗಿತ್ತು.</verse>
				<verse number="4">ಆಗ ಯೋನನು ಒಂದು ದಿವಸದ ಪ್ರಯಾಣಮಾಡಿ, ಪಟ್ಟಣದಲ್ಲಿ ಪ್ರವೇಶಿಸಿ, “ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ನಾಶವಾಗುವುದು,” ಎಂದು ಕೂಗಿ ಹೇಳಿದನು.</verse>
				<verse number="5">ನಿನೆವೆಯ ಮನುಷ್ಯರು, ದೇವರನ್ನು ನಂಬಿ, ಉಪವಾಸವನ್ನು ಸಾರಿ, ಅವರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನವರೆಗೂ ಗೋಣಿತಟ್ಟನ್ನು ಉಟ್ಟುಕೊಂಡರು.</verse>
				<verse number="6">ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ, ಅವನು ತನ್ನ ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯಲ್ಲಿ ಕುಳಿತುಕೊಂಡನು.</verse>
				<verse number="7">ಅವನು ನಿನೆವೆಯಲ್ಲಿ ಈ ಘೋಷಣೆಯನ್ನು ಮಾಡಿದನು: “ಅರಸನ ಮತ್ತು ಶ್ರೇಷ್ಠರ ತೀರ್ಪಿನ ಪ್ರಕಾರ: “ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನನ್ನೂ ರುಚಿ ನೋಡದಿರಲಿ, ಮೇಯದಿರಲಿ, ನೀರನ್ನು ಕುಡಿಯದಿರಲಿ.</verse>
				<verse number="8">ಆದರೆ ಮನುಷ್ಯರೂ ಮೃಗಗಳೂ ಗೋಣಿತಟ್ಟು ಹಾಕಿಕೊಂಡು, ಜೋರಾದ ಧ್ವನಿಯಿಂದ ದೇವರಿಗೆ ಮೊರೆಯಿಡಲಿ. ಎಲ್ಲರೂ ತಮ್ಮ ತಮ್ಮ ದುರ್ಮಾರ್ಗಗಳನ್ನೂ, ತಮ್ಮ ತಮ್ಮ ಕೈಗಳಲ್ಲಿರುವ ಹಿಂಸಾಚಾರವನ್ನೂ ಬಿಟ್ಟು ತಿರುಗಲಿ.</verse>
				<verse number="9">ಹೀಗೆ ಮಾಡಿದರೆ, ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ಅನುಕಂಪದಿಂದ ತಮ್ಮ ಉಗ್ರಕೋಪವನ್ನು ತಡೆದು, ನಾವು ನಾಶವಾಗದೆ ಉಳಿಸುವರೇನೋ, ಯಾರು ಬಲ್ಲರು?”</verse>
				<verse number="10">ಆಗ ದೇವರು, ನಿನೆವೆಯವರು ತಮ್ಮ ದುರ್ಮಾರ್ಗವನ್ನು ಬಿಟ್ಟು ತಿರುಗಿಕೊಂಡರೆಂದು ಕಂಡು, ತಾವು ವಿಧಿಸುವುದಾಗಿ ನುಡಿದ ವಿನಾಶವನ್ನು ಅವರ ಮೇಲೆ ಬರಮಾಡದೆ, ಅವರನ್ನು ಕನಿಕರಿಸಿದರು.</verse>
			</chapter>
			<chapter number="4">
				<verse number="1">ಆದರೆ ಯೋನನು ತುಂಬಾ ಬೇಸರಗೊಂಡನು. ಅವನಿಗೆ ಬಹು ಕೋಪ ಬಂತು.</verse>
				<verse number="2">ಅವನು ಯೆಹೋವ ದೇವರಿಗೆ ಪ್ರಾರ್ಥನೆಮಾಡಿ: “ಯೆಹೋವ ದೇವರೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನು ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು. ನೀವು ಕೃಪೆಯೂ ಅನುಕಂಪವೂ ಪ್ರೀತಿಯಲ್ಲಿ ಐಶ್ವರ್ಯವುಳ್ಳ ದೇವರೆಂದೂ ಕೇಡಿನ ವಿಷಯವಾಗಿ ಮನಮರುಗುವವರೆಂದೂ ನನಗೆ ತಿಳಿದಿತ್ತು.</verse>
				<verse number="3">ಆದ್ದರಿಂದ ಯೆಹೋವ ದೇವರೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆಯಿರಿ, ಏಕೆಂದರೆ ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.</verse>
				<verse number="4">ಆದರೆ ಯೆಹೋವ ದೇವರು, “ನೀನು ಹೀಗೆ ಕೋಪ ಮಾಡಿಕೊಳ್ಳುವುದು ಸರಿಯೋ?” ಎಂದು ಯೋನನಿಗೆ ಹೇಳಿದರು.</verse>
				<verse number="5">ಆಗ ಯೋನನು ಪಟ್ಟಣವನ್ನು ಬಿಟ್ಟು, ಪಟ್ಟಣದ ಪೂರ್ವದಿಕ್ಕಿನ ಕಡೆಯಲ್ಲಿ ಕುಳಿತುಕೊಂಡು, ಗುಡಿಸಲನ್ನು ಕಟ್ಟಿಕೊಂಡು, ಪಟ್ಟಣದಲ್ಲಿ ಏನಾಗುವುದೆಂದು ನೋಡುವವರೆಗೆ ಗುಡಿಸಲಿನ ನೆರಳಿನಲ್ಲಿ ಕುಳಿತುಕೊಂಡನು.</verse>
				<verse number="6">ದೇವರಾದ ಯೆಹೋವ ದೇವರು ಒಂದು ಸೋರೆ ಬಳ್ಳಿಯನ್ನು ಹಬ್ಬಿಸಿ, ಅದು ಯೋನನ ಮೇಲೆ ಹಬ್ಬಿ ಬಂದು, ಅವನ ತಲೆಗೆ ನೆರಳು ಕೊಟ್ಟು, ಅವನ ದುಃಖದಿಂದ ಅವನನ್ನು ಬಿಡಿಸುವಂತೆ ಮಾಡಿದರು. ಯೋನನು ಆ ಸೋರೆ ಬಳ್ಳಿಯ ವಿಷಯವಾಗಿ ಬಹಳ ಸಂತೋಷಪಟ್ಟನು.</verse>
				<verse number="7">ಮಾರನೆಯ ದಿವಸ ಉದಯವಾದಾಗ, ದೇವರು ಒಂದು ಹುಳುವನ್ನು ಸಿದ್ಧಮಾಡಿದರು. ಅದು ಸೋರೆ ಬಳ್ಳಿಯನ್ನು ಒಣಗುವ ಹಾಗೆ ಹೊಡೆಯಿತು.</verse>
				<verse number="8">ಸೂರ್ಯೋದಯವಾದಾಗ ದೇವರು ಉಗ್ರವಾದ ಪೂರ್ವ ಗಾಳಿಯನ್ನು ಸಿದ್ಧಮಾಡಿದರು. ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ, ಅವನು ಮೂರ್ಛೆ ಹೋಗಿ, ಮರಣವನ್ನು ಕೇಳಿಕೊಂಡು, “ನಾನು ಬದುಕುವುದಕ್ಕಿಂತ ಸಾಯುವುದು ಒಳ್ಳೆಯದು,” ಎಂದನು.</verse>
				<verse number="9">ಆದರೆ ದೇವರು ಯೋನನಿಗೆ, “ನೀನು ಸೋರೆ ಬಳ್ಳಿಯನ್ನು ಕುರಿತು ಕೋಪ ಮಾಡುವುದು ಸರಿಯೋ?” ಎಂದರು. ಅವನು, “ನಾನು ಸಾಯುವಷ್ಟು ಕೋಪ ಮಾಡುವುದು ಒಳ್ಳೆಯದೇ,” ಎಂದನು.</verse>
				<verse number="10">ಆದರೆ ಯೆಹೋವ ದೇವರು, “ನೀನು ಕಷ್ಟಪಡದಂಥ, ಬೆಳೆಸದಂಥ, ಒಂದು ರಾತ್ರಿಯಲ್ಲಿ ಹುಟ್ಟಿ, ಒಂದೇ ರಾತ್ರಿಯಲ್ಲಿ ನಾಶವಾದಂಥ ಸೋರೆ ಬಳ್ಳಿಗಾಗಿ ಚಿಂತಿಸಿದೆಯಲ್ಲಾ,</verse>
				<verse number="11">ಹಾಗಾದರೆ ಎಡಬಲ ಕೈಗಳನ್ನು ತಿಳಿಯದವರಾದ ಲಕ್ಷದ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು ಬಹಳ ಪಶುಪ್ರಾಣಿಗಳೂ ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆಯನ್ನು ನಾನು ಚಿಂತಿಸಬಾರದೋ?” ಎಂದರು.</verse>
			</chapter>
		</book>
		<book number="33">
			<chapter number="1">
				<verse number="1">ಯೆಹೂದದ ಅರಸರಾದ ಯೋತಾಮನ ಆಹಾಜನ, ಹಿಜ್ಕೀಯನ, ದಿವಸಗಳಲ್ಲಿ ಮೊರೇಷೆತಿನವನಾದ ಮೀಕನಿಗೆ ಬಂದ ಯೆಹೋವ ದೇವರ ವಾಕ್ಯವು. ಅವನು ಸಮಾರ್ಯ ಮತ್ತು ಯೆರೂಸಲೇಮಿನ ವಿಷಯವಾಗಿ ಕಂಡ ದರ್ಶನ.</verse>
				<verse number="2">ಎಲ್ಲಾ ಜನಗಳೇ ಕೇಳಿರಿ, ಭೂಮಿಯೇ, ಅದರಲ್ಲಿರುವವರೆಲ್ಲರೇ, ಕಿವಿಗೊಡಿರಿ. ಸಾರ್ವಭೌಮ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದೊಳಗಿಂದ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವರು.</verse>
				<verse number="3">ಯೆಹೋವ ದೇವರು ತಮ್ಮ ವಾಸಸ್ಥಾನದಿಂದ ಇಳಿದು ಬರುತ್ತಾರೆ. ಅವರು ಇಳಿದು ಭೂಮಿಯ ಉನ್ನತವಾದ ಸ್ಥಳಗಳ ಮೇಲೆ ಸಂಚರಿಸುತ್ತಾರೆ.</verse>
				<verse number="4">ಬೆಂಕಿಯ ಮುಂದೆ ಮೇಣದ ಹಾಗೆಯೂ ಇಳಿಜಾರಿನ ಸ್ಥಳದಲ್ಲಿ ರಭಸವಾಗಿ ಹರಿಯುವ ನೀರಿನ ಹಾಗೆಯೂ ಬೆಟ್ಟಗಳು ಆತನ ಕೆಳಗೆ ಕರಗುವುವು; ತಗ್ಗುಗಳು ಸೀಳುವುವು.</verse>
				<verse number="5">ಇದೆಲ್ಲಾ ಯಾಕೋಬಿನ ಅಪರಾಧದ ನಿಮಿತ್ತವೇ ಇಸ್ರಾಯೇಲಿನ ಮನೆತನದವರ ಪಾಪದಿಂದಲೇ, ಯಾಕೋಬನ ಅಪರಾಧವೇನು? ಅದು ಸಮಾರ್ಯವಲ್ಲವೇ? ಯೆಹೂದದ ಉನ್ನತ ಪೂಜಾಸ್ಥಳ ಯಾವುದು? ಅದು ಯೆರೂಸಲೇಮು ಅಲ್ಲವೋ?</verse>
				<verse number="6">ಹೀಗಿರುವುದರಿಂದ ನಾನು ಸಮಾರ್ಯವನ್ನು ಹೊಲದ ದಿಬ್ಬವನ್ನಾಗಿಯೂ ದ್ರಾಕ್ಷಿಬಳ್ಳಿ ನೆಡುವ ಸ್ಥಳವನ್ನಾಗಿಯೂ ಮಾಡುವೆನು. ಅದರ ಕಲ್ಲುಗಳನ್ನು ತಗ್ಗಿನಲ್ಲಿ ಸುರಿದುಬಿಟ್ಟು, ಅದರ ಅಸ್ತಿವಾರಗಳನ್ನು ಹೊರಗೆಡಹುವೆನು.</verse>
				<verse number="7">ಅದರ ವಿಗ್ರಹಗಳೆಲ್ಲಾ ತುಂಡುಗಳಾಗುವಂತೆ ಮಾಡುವೆನು. ಅದರ ಆಲಯದ ಕಾಣಿಕೆಗಳೆಲ್ಲಾ ಬೆಂಕಿಯಿಂದ ಸುಟ್ಟುಹೋಗುವುದು. ಅದರ ವಿಗ್ರಹಗಳನ್ನೆಲ್ಲಾ ಹಾಳುಮಾಡುವೆನು. ಅದು ವೇಶ್ಯಾವೃತ್ತಿಯ ಕೂಲಿಯಿಂದ ಕೂಡಿಸಿಕೊಂಡವು. ವೇಶ್ಯಾವೃತ್ತಿಯ ಕೂಲಿಯನ್ನಾಗಿಯೇ ಅವುಗಳನ್ನು ಉಪಯೋಗಿಸಬೇಕಾಗುತ್ತದೆ.</verse>
				<verse number="8">ಆದ್ದರಿಂದ ನಾನು ಗೋಳಾಡಿ ಅರಚುವೆನು. ಬರಿಗಾಲಿನಲ್ಲಿಯೂ ಬೆತ್ತಲೆಯಾಗಿಯೂ ಹೋಗುವೆನು. ನರಿಗಳ ಹಾಗೆ ಕೂಗುವೆನು, ಉಷ್ಟ್ರಪಕ್ಷಿಯಂತೆ ನರಳುವೆನು.</verse>
				<verse number="9">ಸಮಾರ್ಯದ ಗಾಯವು ಗುಣವಾಗದಂಥದ್ದು, ಅದು ಯೆಹೂದಕ್ಕೆ ಬಂತು; ನನ್ನ ಜನರ ಬಾಗಿಲಿಗೂ ಯೆರೂಸಲೇಮಿನವರೆಗೂ ಅದು ತಲುಪಿತು.</verse>
				<verse number="10">ಗತ್ ಊರಿನಲ್ಲಿ ಅದನ್ನು ತಿಳಿಸಬೇಡ; ಸ್ವಲ್ಪವಾದರೂ ಅಳಬೇಡ; ಬೇತ್ ಒಫ್‌ರಾಹದಲ್ಲಿ ಧೂಳಿನಲ್ಲಿ ಹೊರಳಾಡು.</verse>
				<verse number="11">ಶಾಫೀರಿನ ನಿವಾಸಿಯೇ, ನಗ್ನತೆಯಿಂದಲೂ ನಾಚಿಕೆಯಿಂದಲೂ ಹಾದುಹೋಗಿರಿ, ಚಾನಾನಿನಲ್ಲಿ ವಾಸಿಸುವವರು ಹೊರಗೆ ಬರುವುದಿಲ್ಲ, ಬೇತ್ ಎಚೆಲು ನರಳುತ್ತಿದೆ. ಅದು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದಿಲ್ಲ.</verse>
				<verse number="12">ಕೇಡು ಯೆಹೋವ ದೇವರಿಂದ ಇಳಿದು ಯೆರೂಸಲೇಮಿನ ಪುರದ್ವಾರಕ್ಕೆ ತಗಲಿದ ಕಾರಣ ಮಾರೋತಿನವರು ಮೇಲುಂಟಾಗುವುದಿಲ್ಲವೋ ಎಂದು ವೇದನೆ ಪಡುತ್ತಾರೆ.</verse>
				<verse number="13">ಲಾಕೀಷಿನ ನಿವಾಸಿಗಳೇ, ಕುದುರೆಗಳನ್ನು ರಥಕ್ಕೆ ಕಟ್ಟಿರಿ, ಚೀಯೋನ್ ಮಗಳ ಪಾಪವು ನಿನ್ನಿಂದ ಪ್ರಾರಂಭವಾಯಿತು ಇಸ್ರಾಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಹುಟ್ಟಿ ಬಂದವು.</verse>
				<verse number="14">ಹೀಗಿರುವುದರಿಂದ ಮೋರೆಶತ್ ಗತ್ ಊರಿಗೆ ಅಗಲಿ ಹೋಗುವ ಕಾಣಿಕೆಗಳನ್ನು ಕೊಡುವೆ. ಅಕ್ಜೀಬಿನ ಮನೆತನಗಳು ಇಸ್ರಾಯೇಲಿನ ಅರಸರಿಗೆ ಮೋಸಮಾಡುವುವು.</verse>
				<verse number="15">ಮಾರೇಷದ ನಿವಾಸಿಯೇ, ನಿನಗೆ ವಿರೋಧವಾಗಿ ಜಯಶಾಲಿಗಳನ್ನು ನಾನು ತರುವೆನು. ಇಸ್ರಾಯೇಲಿನ ಮಹಿಮೆಯಾದಾತನು ಅದುಲ್ಲಾಮಿನ ಮಟ್ಟಿಗೂ ಬರುವನು.</verse>
				<verse number="16">ನಿನ್ನ ಮುದ್ದುಮಕ್ಕಳಿಗೋಸ್ಕರ ತಲೆ ಬೋಳಿಸಿಕೊಂಡು ಕ್ಷೌರಮಾಡಿಸಿಕೋ. ನಿನ್ನ ಬೋಳುತನವನ್ನು ಹದ್ದಿನಂತೆ ಮಾಡಿಕೋ. ಏಕೆಂದರೆ ಅವರು ನಿನ್ನನ್ನು ಬಿಟ್ಟು ಸೆರೆಯಾಗಿ ಹೋಗುವರು.</verse>
			</chapter>
			<chapter number="2">
				<verse number="1">ಅಪರಾಧವನ್ನು ಯೋಚಿಸಿ ಅಪರಾಧವನ್ನು ಕಲ್ಪಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡೆಸುವವರಿಗೆ ಕಷ್ಟ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ. ಏಕೆಂದರೆ ಅದು ಅವರ ಕೈಶಕ್ತಿಯಲ್ಲಿದೆ.</verse>
				<verse number="2">ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತೆಗೆದುಕೊಳ್ಳುತ್ತಾರೆ. ಮನೆಗಳನ್ನೂ ಸಹ ತೆಗೆದುಕೊಳ್ಳುತ್ತಾರೆ. ಮನುಷ್ಯನಿಗೂ ಅವನ ಮನೆಗೂ ಇತರರಿಗೂ ಅವನ ಸ್ವಾಸ್ತ್ಯವನ್ನು ಕಸಿದುಕೊಳ್ಳುತ್ತಾರೆ.</verse>
				<verse number="3">ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ, “ಇಗೋ, ನಾನು ಈ ವಂಶಕ್ಕೆ ವಿರೋಧವಾಗಿ ನಾಶನವನ್ನು ಯೋಚಿಸುತ್ತೇನೆ. ಇದರಿಂದ ನೀವು ನಿಮ್ಮನ್ನು ರಕ್ಷಿಸಿಕೊಳ್ಳಲಾರಿರಿ. ಅಹಂಕಾರವಾಗಿ ನಡೆಯದೆ ಇರುವಿರಿ. ಇದು ವಿಪತ್ತಿನ ಕಾಲವೇ,</verse>
				<verse number="4">ಆ ದಿನದಲ್ಲಿ ಜನರು ನಿಮ್ಮನ್ನು ಅಪಹಾಸ್ಯ ಮಾಡುವರು. ‘ನಾವು ಸಂಪೂರ್ಣವಾಗಿ ಹಾಳಾಗಿದ್ದೇವೆ. ನನ್ನ ಪ್ರಜೆಗಳ ಆಸ್ತಿ ವಿಭಾಗವಾಗಿದೆ. ಆತನು ಅದನ್ನು ನನ್ನಿಂದ ತೆಗೆದುಕೊಳ್ಳುವನು. ಆತನು ನಮ್ಮ ಹೊಲಗಳನ್ನು ದ್ರೋಹಿಗಳಿಗೆ ಹಂಚಿಕೊಟ್ಟಿದ್ದಾನೆ,’ ” ಎಂಬ ದುಃಖದಾಯಕ ಸಂಗೀತದಿಂದ ಹಾಸ್ಯಮಾಡುವರು.</verse>
				<verse number="5">ಆದ್ದರಿಂದ ಚೀಟುಹಾಕಿ ದೇಶವನ್ನು ಹಂಚುವದಕ್ಕೆ ಯೆಹೋವ ದೇವರ ಸಭೆಯಲ್ಲಿ ನಿನಗೆ ಯಾರೂ ಇರುವುದಿಲ್ಲ.</verse>
				<verse number="6">“ಪ್ರವಾದಿಸಬೇಡ, ಈ ಸಂಗತಿಗಳ ಬಗ್ಗೆ ಪ್ರವಾದನೆ ಹೇಳಬೇಡ. ಅವಮಾನ ನಮ್ಮ ಮೇಲೆ ಬರುವುದೇ ಇಲ್ಲ,” ಎಂದು ಅವರ ಪ್ರವಾದಿಗಳು ಹೇಳುತ್ತಾರೆ.</verse>
				<verse number="7">ಯಾಕೋಬಿನ ಮನೆತನದವರೇ, “ಯೆಹೋವ ದೇವರ ಆತ್ಮವು ಕೋಪಗೊಂಡಿದೆಯೇ? ಅವರು ಇಂಥ ಕಾರ್ಯ ಮಾಡುವರೋ?” “ಯಥಾರ್ಥವಾಗಿ ನಡೆಯುವವನಿಗೆ ನನ್ನ ಮಾತುಗಳು ಒಳ್ಳೆಯದನ್ನು ಮಾಡುವುದಿಲ್ಲವೋ?</verse>
				<verse number="8">ಇತ್ತೀಚೆಗೆ ನನ್ನ ಜನರು ವೈರಿಯ ಹಾಗೆ ಎದ್ದಿದ್ದಾರೆ. ಯುದ್ಧದಿಂದ ತಿರುಗಿಕೊಂಡು ನಿರ್ಭಯವಾಗಿ ಹೋಗುವವರ ವಸ್ತ್ರದ ಸಂಗಡ ನಿಲುವಂಗಿಯನ್ನು ನೀವು ಕಿತ್ತುಕೊಳ್ಳುತ್ತೀರಿ.</verse>
				<verse number="9">ನನ್ನ ಜನರ ಸ್ತ್ರೀಯರನ್ನು ಅವರ ರಮ್ಯವಾದ ಮನೆಗಳೊಳಗಿಂದ ಹೊರಡಿಸಿದ್ದೀರಿ. ಅವರ ಮಕ್ಕಳಿಂದ ನನ್ನ ಆಶೀರ್ವಾದವನ್ನು ಎಂದೆಂದಿಗೂ ತೆಗೆದಿದ್ದೀರಿ.</verse>
				<verse number="10">ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿಯ ಸ್ಥಳವಲ್ಲ, ಏಕೆಂದರೆ ಇದಕ್ಕೆ ಹೊಲಸು ಅಂಟಿಕೊಂಡು, ಯಾವ ಸುಧಾರಣೆಗೂ ಒಳಗಾಗದಂತೆ ಹಾಳಾಗಿ ಹೋಗಿಬಿಟ್ಟಿದೆ.</verse>
				<verse number="11">ಒಬ್ಬ ಸುಳ್ಳುಗಾರನೂ ಮೋಸಗಾರನೂ ಬಂದು, ‘ನಿನಗೆ ದ್ರಾಕ್ಷಾರಸವೂ ಮದ್ಯಪಾನವೂ ಯಥೇಚ್ಛವಾಗಿ ದೊರೆಯುವುದೆಂದು ನಾನು ಪ್ರವಾದಿಸುವೆನು,’ ಎಂದು ಹೇಳಿದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.</verse>
				<verse number="12">“ಯಾಕೋಬೇ, ನಿನ್ನವರನ್ನೆಲ್ಲಾ ನಿಶ್ಚಯವಾಗಿ ಕೂಡಿಸುವೆನು. ಇಸ್ರಾಯೇಲಿನಲ್ಲಿ ಉಳಿದವರನ್ನು ನಿಶ್ಚಯವಾಗಿ ಕೂಡಿಸುವೆನು. ಬೊಚ್ರದ ಕುರಿಗಳಂತೆಯೂ ತಮ್ಮ ಹಟ್ಟಿಯ ನಡುವೆ ಇರುವ ಮಂದೆಯಂತೆಯೂ ಅವರನ್ನು ಒಟ್ಟಾಗಿ ಕೂಡಿಸುವೆನು. ಹುಲ್ಲುಗಾವಲಿನ ಕುರಿಮಂದೆಯಂತೆ, ಸ್ಥಳವು ಜನರಿಂದ ತುಂಬಿ ತುಳುಕುವುದು.</verse>
				<verse number="13">ಮಾರ್ಗ ತೆರೆಯುವಾತನು ಅವರ ಮುಂದೆ ಹೋಗುವನು. ಅವರು ಬಾಗಿಲು ತೆರೆದು ಹೊರಗೆ ಹೋಗುವರು. ಅವರ ಅರಸನು ಅವರ ಮುಂದೆ ಹಾದು ಹೋಗುತ್ತಾನೆ. ಯೆಹೋವ ದೇವರು ಅವರ ಮುಂದಾಳತ್ವವನ್ನು ವಹಿಸುವರು.”</verse>
			</chapter>
			<chapter number="3">
				<verse number="1">ಆಗ ನಾನು, “ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ. ನೀವು ನ್ಯಾಯವನ್ನು ಪ್ರೀತಿಸಬಾರದೇ.</verse>
				<verse number="2">ಒಳ್ಳೆಯದನ್ನು ದ್ವೇಷಮಾಡಿ ಕೆಟ್ಟದ್ದನ್ನು ಪ್ರೀತಿ ಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ನನ್ನ ಜನರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತು ಕೊಳ್ಳುವವರೇ,</verse>
				<verse number="3">ನನ್ನ ಪ್ರಜೆಯ ಮಾಂಸವನ್ನು ತಿನ್ನುತ್ತಾರೆ. ಅವರ ಚರ್ಮವನ್ನು ಸುಲಿದುಹಾಕುತ್ತಾರೆ. ಅವರ ಎಲುಬುಗಳನ್ನು ಮುರಿದುಹಾಕುತ್ತೀರಿ. ಹಂಡೆಯಲ್ಲಿನ ತುಂಡುಗಳಂತೆ, ಮಡಕೆಯಲ್ಲಿನ ಮಾಂಸದ ಚೂರುಗಳಂತೆ ನನ್ನ ಪ್ರಜೆಯನ್ನು ಚೂರುಚೂರಾಗಿ ಕತ್ತರಿಸಿಹಾಕಿದ್ದೀರಿ.”</verse>
				<verse number="4">ಆಗ ಅವರು ಯೆಹೋವ ದೇವರಿಗೆ ಮೊರೆಯಿಡುವರು; ಆದರೆ ಅವರು ಅವರಿಗೆ ಉತ್ತರ ಕೊಡುವುದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತಮ್ಮ ಮುಖವನ್ನು ಮರೆಮಾಡುವರು.</verse>
				<verse number="5">ಯೆಹೋವ ದೇವರು ಹೇಳುವುದೇನೆಂದರೆ, “ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವ ಪ್ರವಾದಿಗಳಿಗೆ ತಿನ್ನಲು ಕೊಟ್ಟರೆ ‘ಸಮಾಧಾನವಾಗಲಿ’ ಎನ್ನುವರು. ಆದರೆ ಅವರಿಗೆ ತಿನ್ನಲು ಏನೂ ಕೊಡದವನ ವಿರೋಧವಾಗಿ ಯುದ್ಧಕ್ಕೂ ಅವರು ಸಿದ್ಧರಾಗುವರು.</verse>
				<verse number="6">ದರ್ಶನವಿಲ್ಲದೆ, ನಿಮಗೆ ರಾತ್ರಿಯಾಗುವುದು; ಶಕುನವಿಲ್ಲದೆ ನಿಮಗೆ ಕತ್ತಲಾಗುವುದು. ಪ್ರವಾದಿಗಳಿಗೆ ಸೂರ್ಯ ಮುಳುಗುವುದು. ಅವರ ಮೇಲೆ ಹಗಲು ಕತ್ತಲೆಯಾಗುವುದು.</verse>
				<verse number="7">ಆಗ ದರ್ಶಿಗಳು ನಾಚಿಕೆಪಡುವರು, ಶಕುನಗಾರರು ಅವಮಾನಗೊಳ್ಳುವರು. ದೇವರಿಂದ ಉತ್ತರವಿಲ್ಲದ ಕಾರಣ, ಎಲ್ಲರೂ ತಮ್ಮ ತುಟಿಗಳನ್ನು ಮುಚ್ಚಿಕೊಳ್ಳುವರು.”</verse>
				<verse number="8">ಆದರೆ ನಿಶ್ಚಯವಾಗಿ ನಾನು ಯಾಕೋಬಿನ ಅವನ ಅಪರಾಧವನ್ನೂ ಇಸ್ರಾಯೇಲಿಗೆ ಅವನ ಪಾಪವನ್ನೂ ತಿಳಿಸುವುದಕ್ಕೆ ಯೆಹೋವ ದೇವರ ಆತ್ಮದ ಮುಖಾಂತರ ಶಕ್ತಿಯಿಂದಲೂ ನ್ಯಾಯದಿಂದಲೂ ತ್ರಾಣದಿಂದಲೂ ತುಂಬಿದ್ದೇನೆ.</verse>
				<verse number="9">ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾಧಿಪತಿಗಳೇ, ನ್ಯಾಯವನ್ನು ನಿಂದಿಸಿ ಸರಿಯಾದದ್ದನ್ನೆಲ್ಲಾ ಡೊಂಕುಮಾಡುವವರೇ,</verse>
				<verse number="10">ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅನ್ಯಾಯದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ.</verse>
				<verse number="11">ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ. ಅದರ ಪ್ರವಾದಿಗಳು ಹಣಕ್ಕೆ ಶಕುನ ಹೇಳುತ್ತಾರೆ. ಆದರೂ ಯೆಹೋವ ದೇವರ ಮೇಲೆ ಆತುಕೊಂಡು, “ಯೆಹೋವ ದೇವರು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವುದಿಲ್ಲ,” ಎನ್ನುತ್ತಾರೆ.</verse>
				<verse number="12">ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನನ್ನು ಹೊಲದ ಹಾಗೆ ಉಳಲಾಗುವುದು. ಯೆರೂಸಲೇಮು ಹಾಳುದಿಬ್ಬಗಳಾಗುವುದು. ಆಲಯದ ಬೆಟ್ಟವೂ ಕಾಡುಗುಡ್ಡಗಳಂತಾಗುವುದು.</verse>
			</chapter>
			<chapter number="4">
				<verse number="1">ಅಂತ್ಯಕಾಲದಲ್ಲಿ, ಯೆಹೋವ ದೇವರ ಮಂದಿರದ ಪರ್ವತವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು, ಆಗ ಜನಾಂಗಗಳು ಅದರ ಬಳಿಗೆ ಪ್ರವಾಹದಂತೆ ಬರುವವು.</verse>
				<verse number="2">ಅನೇಕ ಜನಾಂಗಗಳು ಬಂದು ಹೀಗೆಂದು ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ಅವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು. ನಾವು ಅವರ ದಾರಿಗಳಲ್ಲಿ ನಡೆಯುವೆವು. ಚೀಯೋನಿನಿಂದ ದೇವರ ನಿಯಮವೂ ಯೆರೂಸಲೇಮಿನಿಂದ ದೇವರ ವಾಕ್ಯವೂ ಹೊರಡುವುವು.”</verse>
				<verse number="3">ಆಗ ಆತನು ಅನೇಕ ಜನಗಳ ಮಧ್ಯದಲ್ಲಿ ನ್ಯಾಯತೀರಿಸಿ ದೂರದಲ್ಲಿರುವ ಬಲವಾದ ಜನಾಂಗಗಳಿಗೆ ತೀರ್ಪುಕೊಡುವನು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ. ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.</verse>
				<verse number="4">ಆದರೆ ಒಬ್ಬಬ್ಬನು ತನ್ನ ತನ್ನ ದ್ರಾಕ್ಷಿಬಳ್ಳಿಯ ಕೆಳಗೂ ತನ್ನ ತನ್ನ ಅಂಜೂರದ ಗಿಡದ ಕೆಳಗೂ ಕುಳಿತುಕೊಳ್ಳುವನು. ಭಯಪಡಿಸುವವನು ಯಾರೂ ಇರುವುದಿಲ್ಲ. ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ಇದನ್ನು ನುಡಿದಿದ್ದಾರೆ.</verse>
				<verse number="5">ಎಲ್ಲಾ ಜನಾಂಗಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ದೇವರ ಹೆಸರಿನಲ್ಲಿ ನಡೆಯುವನು. ಆದರೆ ನಾವು ನಮ್ಮ ದೇವರಾದ ಯೆಹೋವ ದೇವರ ಹೆಸರಿನಲ್ಲಿ ಎಂದೆಂದಿಗೂ ನಡೆಯುವೆವು.</verse>
				<verse number="6">ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಆ ದಿವಸದಲ್ಲಿ” ನಾನು ಕುಂಟಾದವರನ್ನು ಒಟ್ಟುಗೂಡಿಸುವೆನು. ನಾನು ತಳ್ಳಿಬಿಟ್ಟದ್ದನ್ನೂ ಕಷ್ಟಪಡಿಸಿದವರನ್ನೂ ಒಂದಾಗಿ ಸೇರಿಸುವೆನು.</verse>
				<verse number="7">“ಕುಂಟಾದದ್ದನ್ನು ಉಳಿದದ್ದನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾಗಿಯೂ ಮಾಡುವೆನು. ಯೆಹೋವ ದೇವರು ಇಂದಿನಿಂದ ಸದಾಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವರು.</verse>
				<verse number="8">ಕುರಿಮಂದೆಯ ಬುರುಜೇ, ಚೀಯೋನ್ ಪುತ್ರಿಯ ದುರ್ಗವೇ, ಮೊದಲಿದ್ದ ರಾಜ್ಯಾಧಿಕಾರವೂ ನಿಮಗೆ ಲಭಿಸುವುದು. ಯೆರೂಸಲೇಮಿನ ಪುತ್ರಿಗೆ ರಾಜ್ಯತ್ವವೂ ಬರುವುದು.”</verse>
				<verse number="9">ಈಗ ಏಕೆ ಗಟ್ಟಿಯಾಗಿ ಕೂಗುತ್ತೀ? ನಿನ್ನಲ್ಲಿ ಅರಸನಿಲ್ಲವೋ? ನಿನ್ನ ಅಧಿಕಾರಿಯು ನಾಶವಾದನೋ? ಹೆರುವವಳಂತೆ ನಿನಗೆ ವೇದನೆ ಬಂದಿರುವುದೋ?</verse>
				<verse number="10">ಚೀಯೋನ್ ಪುತ್ರಿಯೇ ಹೆರುವವಳಂತೆ ವೇದನೆ ತಾಳಿಕೋ, ಏಕೆಂದರೆ ಈಗ ಪಟ್ಟಣದೊಳಗಿಂದ ಹೊರಟು ಹೊಲದಲ್ಲಿ ವಾಸಮಾಡಿ ಬಾಬಿಲೋನಿಗೆ ಹೋಗುವೆ, ಅಲ್ಲಿ ನಿನಗೆ ಬಿಡುಗಡೆಯಾಗುವುದು. ಅಲ್ಲಿ ಯೆಹೋವ ದೇವರು ನಿನ್ನನ್ನು ನಿನ್ನ ಶತ್ರುಗಳ ಕೈಯೊಳಗಿಂದ ವಿಮೋಚಿಸುವರು.</verse>
				<verse number="11">ಆದರೆ ಈಗ ಅನೇಕ ಜನಾಂಗಗಳು ನಿನಗೆ ವಿರೋಧವಾಗಿ ಕೂಡಿಬಂದಿವೆ. ಅವರು, “ಯೆರೂಸಲೇಮನ್ನು ಕೆಡಿಸೋಣ. ಚೀಯೋನಿನ ನಾಶನವನ್ನು ಕಣ್ಣಾರೆ ನೋಡೋಣ,” ಎಂದು ಹೇಳುತ್ತಾರೆ.</verse>
				<verse number="12">ಆದರೆ ಯೆಹೋವ ದೇವರ ಯೋಚನೆಗಳು ಅವರಿಗೆ ತಿಳಿದಿಲ್ಲ. ಆತನ ಆಲೋಚನೆಯನ್ನು ಅವರು ಗ್ರಹಿಸಲಿಲ್ಲ. ಏಕೆಂದರೆ ಕಣದಲ್ಲಿ ಸಿವುಡುಗಳ ಹಾಗೆ ಅವರನ್ನು ಕೂಡಿಸುವರು.</verse>
				<verse number="13">ಚೀಯೋನ್ ಪುತ್ರಿಯೇ, ಎದ್ದು ತುಳಿ. ಏಕೆಂದರೆ ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸುಗಳನ್ನು ಕಂಚಿನದಾಗಿಯೂ ಮಾಡುವೆನು. ನೀನು ಅನೇಕ ಜನಾಂಗಗಳನ್ನು ಚೂರುಚೂರಾಗಿ ಮಾಡುವೆ. ಅವರ ಕೊಳ್ಳೆಹೊಡೆದು ಸಂಪಾದಿಸಿದ್ದ ಸ್ವತ್ತನ್ನು ಯೆಹೋವ ದೇವರಿಗೂ ಅವರ ಸಂಪತ್ತನ್ನು ಲೋಕದ ಕರ್ತ ದೇವರಿಗೂ ಪ್ರತಿಷ್ಠೆಮಾಡುವೆನು.</verse>
			</chapter>
			<chapter number="5">
				<verse number="1">ಬೇತ್ಲೆಹೇಮಿನಿಂದ ಒಬ್ಬ ಅಧಿಪತಿಯು ಸೈನ್ಯಗಳ ಪಟ್ಟಣವೇ, ಗುಂಪುಗಳಾಗಿ ಕೂಡಿಕೊಳ್ಳಿರಿ. ನಮ್ಮ ಮೇಲೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ.</verse>
				<verse number="2">ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.</verse>
				<verse number="3">ಆದ್ದರಿಂದ ಹೆರುವವಳು ಒಬ್ಬ ಮಗನನ್ನು ಹೆರುವ ಕಾಲದವರೆಗೂ ಇಸ್ರಾಯೇಲನ್ನು ಕೈಬಿಡಲಾಗುವುದು. ಆಗ ಅವನ ಸಹೋದರರಲ್ಲಿ ಉಳಿದವರು ಇಸ್ರಾಯೇಲರ ಬಳಿಗೆ ಹಿಂದಿರುಗುವರು.</verse>
				<verse number="4">ಆತನು ಯೆಹೋವ ದೇವರ ಬಲದಲ್ಲಿಯೂ ತನ್ನ ದೇವರಾದ ಯೆಹೋವ ದೇವರ ಹೆಸರಿನ ಘನತೆಯಲ್ಲಿಯೂ ನಿಂತುಕೊಂಡು ತನ್ನ ಮಂದೆಯನ್ನು ಮೇಯಿಸುವನು. ಅವರು ನೆಲೆಯಾಗಿರುವರು, ಆತನ ಘನತೆಯು ಭೂಮಿಯ ಅಂತ್ಯಗಳ ಮಟ್ಟಿಗೂ ತಲುಪುವುದು.</verse>
				<verse number="5">ಆತನೇ ಅವರ ಸಮಾಧಾನವಾಗಿರುವನು. ಅಸ್ಸೀರಿಯದವನು ನಮ್ಮ ನಾಡಿಗೆ ಮುತ್ತಿಗೆ ಹಾಕುವಾಗ ನಮ್ಮ ಕೋಟೆಗಳ ಮೂಲಕ ಸೈನ್ಯವಾಗಿ ಹೋಗುವಾಗ ನಾವು ಅವನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಸೇನಾಪತಿಗಳನ್ನೂ ಎಬ್ಬಿಸುವೆವು.</verse>
				<verse number="6">ಅವರು ಅಸ್ಸೀರಿಯ ದೇಶವನ್ನು ಖಡ್ಗದಿಂದಲೂ ನಿಮ್ರೋದನ ದೇಶವನ್ನು ಹಿಡಿದ ಖಡ್ಗದಿಂದಲೂ ಆಳುವರು. ಅಸ್ಸೀರಿಯವು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರದೇಶವನ್ನು ಮುತ್ತಿಗೆ ಹಾಕಿ ಪ್ರಾಂತಗಳಲ್ಲಿ ನಡೆಯುವಾಗ ಆತನು ನಮ್ಮನ್ನು ತಪ್ಪಿಸುವನು.</verse>
				<verse number="7">ಇದಲ್ಲದೆ ಯಾಕೋಬನ ಶೇಷವು ಅನೇಕ ಜನಾಂಗಳ ಮಧ್ಯದಲ್ಲಿ ಯೆಹೋವ ದೇವರಿಂದ ಬಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವುದು. ಅದು ಮನುಷ್ಯರಿಗೋಸ್ಕರ ಆತುಕೊಳ್ಳುವುದಿಲ್ಲ, ಮನುಷ್ಯ ಮಕ್ಕಳಿಗಾಗಿ ಕಾದುಕೊಳ್ಳುವುದಿಲ್ಲ.</verse>
				<verse number="8">ಯಾಕೋಬನ ಜನಶೇಷವು ದೇಶದೇಶಗಳೊಳಗೆ ಅನೇಕ ಜನಾಂಗಗಳ ಮಧ್ಯದಲ್ಲಿ, ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವುದು. ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸಲಾರರು,</verse>
				<verse number="9">ನಿನ್ನ ಕೈ ನಿನ್ನ ವೈರಿಗಳೆಲ್ಲರ ಮೇಲೆ ಉನ್ನತವಾಗಿರುವುದು. ನಿನ್ನ ಶತ್ರುಗಳೆಲ್ಲರು ನಾಶಹೊಂದುವರು.</verse>
				<verse number="10">ಯೆಹೋವ ದೇವರು ಹೀಗೆ ಘೋಷಿಸುತ್ತಾರೆ: “ಆ ದಿವಸದಲ್ಲಿ, ನಾನು ನಿನ್ನ ಮಧ್ಯದೊಳಗಿರುವ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.</verse>
				<verse number="11">ನಿನ್ನ ದೇಶದ ಪಟ್ಟಣಗಳನ್ನು ನಾಶಮಾಡಿಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.</verse>
				<verse number="12">ನಿನ್ನ ಮಂತ್ರತಂತ್ರವನ್ನು ನಾಶಮಾಡುವೆನು; ಕಣಿ ಹೇಳುವವರು ನಿನಗೆ ಇನ್ನು ಇರುವುದಿಲ್ಲ.</verse>
				<verse number="13">ನಿನ್ನ ಕೆತ್ತಿದ ವಿಗ್ರಹಗಳನ್ನೂ ನಿಂತಿರುವ ನಿನ್ನ ಪ್ರತಿಮೆಗಳನ್ನೂ ಸಹ ನಿನ್ನ ಮಧ್ಯದೊಳಗಿಂದ ಕಡಿದುಬಿಡುವೆನು. ಇನ್ನು ನಿನ್ನ ಸ್ವಂತ ಕೈಗಳು ರೂಪಿಸಿದ್ದನ್ನು ನೀನು ಆರಾಧಿಸದಂತೆ ಮಾಡುವೆನು.</verse>
				<verse number="14">ನಿನ್ನ ಅಶೇರ ಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತುಹಾಕಿ ನಿನ್ನ ಪಟ್ಟಣಗಳನ್ನು ನಾಶಮಾಡುವೆನು.</verse>
				<verse number="15">ನನಗೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿಗೆ ಮುಯ್ಯಿತೀರಿಸುವೆನು.”</verse>
			</chapter>
			<chapter number="6">
				<verse number="1">ಯೆಹೋವ ದೇವರು ಹೇಳುವುದನ್ನು ಈಗ ಕೇಳಿರಿ, ಎದ್ದೇಳು, ಬೆಟ್ಟಗಳ ಮುಂದೆ ವ್ಯಾಜ್ಯವಾಡು; ನೀನು ಹೇಳುವುದನ್ನು ಗುಡ್ಡಗಳು ಕೇಳಲಿ.</verse>
				<verse number="2">ಬೆಟ್ಟಗಳೇ, ಯೆಹೋವ ದೇವರ ಆಪಾದನೆಯನ್ನು ಕೇಳಿರಿ. ಭೂಮಿಯ ಶಾಶ್ವತವಾದ ಅಸ್ತಿವಾರಗಳೇ ಕಿವಿಗೊಡಿರಿ. ಏಕೆಂದರೆ ಯೆಹೋವ ದೇವರಿಗೆ ತಮ್ಮ ಜನರ ವಿರುದ್ಧ ವ್ಯಾಜ್ಯವಿದೆ, ಅವರು ಇಸ್ರಾಯೇಲಿನ ವಿರುದ್ಧ ಆರೋಪಿಸುತ್ತಾರೆ.</verse>
				<verse number="3">ನನ್ನ ಜನರೇ, ನಾನು ನಿಮಗೆ ಏನು ಮಾಡಿದ್ದೇನೆ? ನಾನು ನಿಮ್ಮ ಮೇಲೆ ಭಾರ ಹಾಕಿದ್ದೇನೋ? ನನಗೆ ಉತ್ತರಕೊಡಿರಿ.</verse>
				<verse number="4">ನಾನು ಈಜಿಪ್ಟ್ ದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ, ದಾಸತ್ವದ ದೇಶದೊಳಗಿಂದ ನಿನ್ನನ್ನು ವಿಮೋಚಿಸಿ, ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಿನಗೆ ನಾಯಕರನ್ನಾಗಿ ಕಳುಹಿಸಿದೆನು.</verse>
				<verse number="5">ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಯೋಚಿಸಿದ್ದನ್ನೂ ಬೆಯೋರನ ಮಗ ಬಿಳಾಮನು ಅವನಿಗೆ ಉತ್ತರವಾಗಿ ಹೇಳಿದ್ದನ್ನೂ ಶಿಟ್ಟೀಮು ಮೊದಲುಗೊಂಡು ಗಿಲ್ಗಾಲಿನ ವರೆಗೆ ಆದ ನಿಮ್ಮ ಪ್ರಯಾಣವನ್ನೂ ಈಗ ಜ್ಞಾಪಕಮಾಡಿಕೊಳ್ಳಿರಿ. ಆಗ ಯೆಹೋವ ದೇವರ ನೀತಿಯ ಕೃತ್ಯಗಳನ್ನು ತಿಳಿದುಕೊಳ್ಳುವಿರಿ.</verse>
				<verse number="6">ನಾನು ಯಾವುದರೊಂದಿಗೆ ಯೆಹೋವ ದೇವರ ಮುಂದೆ ಬಂದು, ಯಾವುದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಮತ್ತು ಒಂದು ವರ್ಷದ ಕರುಗಳ ಸಂಗಡ ಆತನ ಮುಂದೆ ಹೋಗಲೇ?</verse>
				<verse number="7">ಯೆಹೋವ ದೇವರು ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಮೆಚ್ಚುವರೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನೂ ಕೊಡಲೋ?</verse>
				<verse number="8">ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ. ಹೌದು, ನ್ಯಾಯವನ್ನು ಕೈಗೊಳ್ಳುವದೂ ಕರುಣೆಯನ್ನು ಪ್ರೀತಿಸುವುದೂ ನಿನ್ನ ದೇವರ ಮುಂದೆ ನಮ್ರನಾಗಿ ನಡೆದುಕೊಳ್ಳುವದೂ ಇದನ್ನೇ ಹೊರತು ಯೆಹೋವ ದೇವರು ನಿನ್ನಿಂದ ಇನ್ನೇನನ್ನು ಅಪೇಕ್ಷಿಸುತ್ತಾರೆ?</verse>
				<verse number="9">ಕೇಳು! ಯೆಹೋವ ದೇವರು ಪಟ್ಟಣವನ್ನು ಕರೆಯುತ್ತಿದ್ದಾರೆ. ನಿಮ್ಮ ನಾಮಕ್ಕೆ ಭಯಪಡುವುದು ಜ್ಞಾನ. ಕೋಲು ಮತ್ತು ಅದನ್ನು ನೇಮಿಸಿದ ವ್ಯಕ್ತಿಯನ್ನು ಎಚ್ಚರಿಕೆಯಿಂದ ಆಲಿಸಿರಿ.</verse>
				<verse number="10">ದುಷ್ಟಮನೆತನವೇ ನೀನು ಕೆಟ್ಟದ್ದಾಗಿ ಸಂಪಾದಿಸಿದ್ದನ್ನು ಶಾಪಗ್ರಸ್ತರಾದ ಕಡಿಮೆ ಅಳತೆಯನ್ನು ನಾನು ಮರೆಯಬೇಕೋ?</verse>
				<verse number="11">ನಾನು ದುಷ್ಟತ್ವದ ತಕ್ಕಡಿಗಳುಳ್ಳವರನ್ನು ಮೋಸವಾದ ಕಲ್ಲುಗಳ ಚೀಲವುಳ್ಳವರನ್ನು ನಿರ್ಮಲರೆಂದೆಣಿಸುವೆನೋ?</verse>
				<verse number="12">ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿದ್ದಾರೆ. ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವರಾಗಿದ್ದಾರೆ. ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ.</verse>
				<verse number="13">ಆದ್ದರಿಂದ ನಾನು ಸಹ ನಿನ್ನನ್ನು ಹೊಡೆದು ನಿನ್ನ ಪಾಪಗಳ ನಿಮಿತ್ತ ನಿನ್ನನ್ನು ಹಾಳುಮಾಡುವೆನು.</verse>
				<verse number="14">ನೀನು ಉಂಡರೂ ತೃಪ್ತಿಯಾಗದೆ ಇರುವೆ; ನಿನ್ನೊಳಗೆ ಹಸಿವೆಯು ಇರುವುದು; ನೀವು ಸಂಗ್ರಹಿಸುತ್ತೀರಿ ಆದರೆ ಏನನ್ನೂ ಉಳಿಸುವುದಿಲ್ಲ, ಏಕೆಂದರೆ ನೀವು ಉಳಿಸುವದನ್ನು ನಾನು ಕತ್ತಿಗೆ ಕೊಡುತ್ತೇನೆ.</verse>
				<verse number="15">ನೀನು ಬೀಜ ಬಿತ್ತಿ ಕೊಯ್ಯದೆ ಇರುವೆ; ಹಿಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವೆ; ದ್ರಾಕ್ಷಾರಸಮಾಡಿ ಕುಡಿಯದೆ ಇರುವೆ.</verse>
				<verse number="16">ಏಕೆಂದರೆ ಒಮ್ರಿಯ ನಿಯಮಗಳನ್ನೂ ಕೈಕೊಳ್ಳುತ್ತೀರಿ. ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ನಿಮ್ಮ ಜನರನ್ನು ಅಪಹಾಸ್ಯಕ್ಕೆ ಗುರಿಮಾಡುವೆನು. ಆದ್ದರಿಂದ ನೀವು ನನ್ನ ಜನರ ನಿಂದೆಯನ್ನು ಹೊರುವಿರಿ.</verse>
			</chapter>
			<chapter number="7">
				<verse number="1">ಎಂತಹ ಸಂಕಟ ನನ್ನದು! ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವವರ ಹಾಗೆಯೂ ದ್ರಾಕ್ಷಿ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣುಗಳೂ ಇಲ್ಲ.</verse>
				<verse number="2">ನಿಷ್ಠಾವಂತರು ಭೂಮಿಯೊಳಗಿಂದ ನಾಶವಾಗಿದ್ದಾರೆ. ಮನುಷ್ಯರಲ್ಲಿ ಯಥಾರ್ಥನು ಒಬ್ಬನು ಉಳಿದಿಲ್ಲ; ಎಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾ, ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.</verse>
				<verse number="3">ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವಂತೆ ಆಡಳಿತಗಾರರು ಉಡುಗೊರೆಗಳನ್ನು ಕೇಳುತ್ತಾರೆ. ನ್ಯಾಯಾಧಿಪತಿಗಳು ಲಂಚವನ್ನು ತೆಗೆದುಕೊಳ್ಳುತ್ತಾರೆ. ಶಕ್ತಿಶಾಲಿ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರೆಲ್ಲರೂ ಒಟ್ಟಾಗಿ ಒಳಸಂಚುಮಾಡುತ್ತಾರೆ.</verse>
				<verse number="4">ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ. ದೇವರು ನಿನ್ನನ್ನು ಭೇಟಿಮಾಡುವ ದಿನ ಬಂದಿದೆ, ನಿನ್ನ ಕಾವಲುಗಾರರು ಎಚ್ಚರಿಕೆಯ ಗಂಟೆಯನ್ನು ಬಾರಿಸುತ್ತಾರೆ. ಈಗ ನೀವು ಭಯಭೀತರಾಗುವ ಸಮಯ.</verse>
				<verse number="5">ನೆರೆಯವನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸೆ ಇಡಬೇಡಿರಿ; ನಿನ್ನ ಎದೆಯಲ್ಲಿ ಮಲಗುವವಳಿಗೆ ನಿನ್ನ ಬಾಯಿಯ ಬಾಗಿಲುಗಳನ್ನು ಕಾಯಿ.</verse>
				<verse number="6">ಏಕೆಂದರೆ ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ. ಮಗಳು ತನ್ನ ತಾಯಿಗೂ, ಸೊಸೆಗೂ ಆಕೆಯ ಅತ್ತೆಗೂ ವಿರೋಧವಾಗಿ ಏಳುತ್ತಾರೆ. ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.</verse>
				<verse number="7">ಆದರೆ ನಾನು ಯೆಹೋವ ದೇವರನ್ನು ಎದುರು ನೋಡುವೆನು. ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು. ನನ್ನ ದೇವರು ನನ್ನ ಕಡೆಗೆ ಕಿವಿಗೊಡುವರು.</verse>
				<verse number="8">ನನ್ನ ಶತ್ರುವೇ, ನನ್ನ ಮೇಲೆ ಸಂತೋಷ ಪಡಬೇಡ, ನಾನು ಬಿದ್ದಿದ್ದರೂ ತಿರುಗಿ ಏಳುವೆನು. ನಾನು ಕತ್ತಲೆಯಲ್ಲಿ ಕುಳಿತುಕೊಂಡರೂ ಯೆಹೋವ ದೇವರೇ ನನಗೆ ಬೆಳಕಾಗಿರುವರು.</verse>
				<verse number="9">ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದರಿಂದ ಅವರು ನನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡೆಸುವ ತನಕ ಅವರ ಕೋಪವನ್ನು ತಾಳುವೆನು. ಆತನು ನನ್ನನ್ನು ಬೆಳಕಿಗೆ ತರುವನು. ಆತನ ನೀತಿಯನ್ನು ನೋಡುವೆನು.</verse>
				<verse number="10">ಆಗ ನನ್ನ ಶತ್ರು ಇದನ್ನು ನೋಡುವನು. ಅವನ ಮುಖವನ್ನು ಅವಮಾನದಿಂದ ಮುಚ್ಚಿಕೊಳ್ಳುವನು, “ನಿನ್ನ ಯೆಹೋವ ದೇವರು ಎಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.</verse>
				<verse number="11">ನಿನ್ನ ಗೋಡೆಗಳು ಪುನಃ ಕಟ್ಟುವ ಆ ದಿವಸ ಬರುವುದು. ಮತ್ತು ನಿಮ್ಮ ಮಿತಿಗಳನ್ನು ಹೆಚ್ಚಿಸುವ ದಿನ ಬರುತ್ತದೆ.</verse>
				<verse number="12">ಆ ದಿವಸದಲ್ಲಿ ಅಸ್ಸೀರಿಯರಿಂದಲೂ ಈಜಿಪ್ಟ್ ಪಟ್ಟಣಗಳಿಂದಲೂ ಯೂಫ್ರೇಟೀಸ್ ನದಿಯವರೆಗೂ ಸಮುದ್ರದಿಂದ ಸಮುದ್ರದವರೆಗೂ ಬೆಟ್ಟದಿಂದ ಬೆಟ್ಟದವರೆಗೂ ಜನರೆಲ್ಲರು ನಿನ್ನ ಬಳಿಗೆ ಬರುವರು.</verse>
				<verse number="13">ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವುದು.</verse>
				<verse number="14">ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆಯನ್ನೂ ನಿನ್ನ ಕೋಲಿನಿಂದ ಮೇಯಿಸು. ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.</verse>
				<verse number="15">ನೀನು ಈಜಿಪ್ಟ್ ದೇಶದೊಳಗಿಂದ ಹೊರಡುವ ದಿವಸಗಳ ಹಾಗೆ ಅವರಿಗೆ ಆಶ್ಚರ್ಯವಾದವುಗಳನ್ನು ತೋರಿಸುವೆನು.</verse>
				<verse number="16">ಜನಾಂಗಗಳು ನೋಡಿ ನಾಚಿಕೊಳ್ಳುವರು ತಮ್ಮ ತಮ್ಮ ಶಕ್ತಿಗೆ ವಂಚಿತರಾಗಿ ನಾಚಿಕೆಪಡುವರು. ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವುವು.</verse>
				<verse number="17">ಅವರು ಹಾವಿನಂತೆ, ನೆಲದ ಮೇಲೆ ತೆವಳುವ ಜೀವಿಗಳಂತೆ ಧೂಳನ್ನು ನೆಕ್ಕುತ್ತಾರೆ. ಅವರು ರಂಧ್ರಗಳಿಂದ ಹೊರಗೆ ಬರುವರು. ನಮ್ಮ ದೇವರಾದ ಯೆಹೋವ ದೇವರಿಗೆ ಅವರು ಹೆದರುವರು. ನಿನಗೆ ಭಯಪಡುವರು.</verse>
				<verse number="18">ಪಾಪಗಳನ್ನು ಮತ್ತು ಅಪರಾಧಗಳನ್ನು ಮನ್ನಿಸುವವನೂ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ಲಕ್ಷಿಸದವನೂ, ನಿನ್ನ ಹಾಗೆ ಇರುವ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವುದಿಲ್ಲ. ಏಕೆಂದರೆ ನೀವು ಕರುಣೆಯಲ್ಲಿ ಸಂತೋಷಪಡುತ್ತೀರಿ.</verse>
				<verse number="19">ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ನಮ್ಮ ಪಾಪಗಳನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವನು.</verse>
				<verse number="20">ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.</verse>
			</chapter>
		</book>
		<book number="34">
			<chapter number="1">
				<verse number="1">ನಿನೆವೆಯ ವಿಷಯವಾದ ಪ್ರವಾದನೆ: ಎಲ್ಕೋಷಿನವನಾದ ನಹೂಮನ ದರ್ಶನದ ಪುಸ್ತಕವು.</verse>
				<verse number="2">ಯೆಹೋವ ದೇವರು ಅಸೂಯೆಪಡುವ ಮತ್ತು ಸೇಡು ತೀರಿಸಿಕೊಳ್ಳುವ ದೇವರು. ಅವರು ತಮ್ಮನ್ನು ಎದುರಿಸುವವರನ್ನು ಎದುರಿಸುತ್ತಾರೆ. ಯೆಹೋವ ದೇವರು ರೋಷದಿಂದ ಮುಯ್ಯಿಗೆ ಮುಯ್ಯಿ ತೀರಿಸುತ್ತಾರೆ. ಯೆಹೋವ ದೇವರು ತಮ್ಮ ವೈರಿಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ಶತ್ರುಗಳ ಮೇಲೆ ಕೋಪವನ್ನು ಪ್ರಕಟಿಸಿಕೊಳ್ಳುತ್ತಾರೆ.</verse>
				<verse number="3">ಯೆಹೋವ ದೇವರು ಕೋಪಗೊಳ್ಳುವುದರಲ್ಲಿ ಶಾಂತಿಸ್ವರೂಪರು. ಆದರೂ ಶಕ್ತಿಯಲ್ಲಿ ಮಹತ್ತಾದವರು. ದುರ್ಮಾರ್ಗದವರನ್ನು ಎಷ್ಟು ಮಾತ್ರಕ್ಕೂ ಶಿಕ್ಷಿಸದೆ ಇರರು. ಯೆಹೋವ ದೇವರ ಮಾರ್ಗವು ಸುಳಿಗಾಳಿಯಲ್ಲಿಯೂ, ಬಿರುಗಾಳಿಯಲ್ಲಿಯೂ ಇದೆ. ಮೇಘಗಳು ಅವರ ಕಾಲುಗಳ ಧೂಳೇ.</verse>
				<verse number="4">ಅವರು ಸಮುದ್ರವನ್ನು ಗದರಿಸಿ, ಅದನ್ನು ಒಣಗುವಂತೆ ಮಾಡುತ್ತಾರೆ. ಸಕಲನದಿಗಳನ್ನು ಬತ್ತಿಸುತ್ತಾರೆ. ಬಾಷಾನು, ಕರ್ಮೆಲು ಬಾಡಿ ಹೋಗುತ್ತವೆ ಮತ್ತು ಲೆಬನೋನಿನ ಹೂವು ಬಾಡಿ ಹೋಗುತ್ತದೆ.</verse>
				<verse number="5">ಬೆಟ್ಟಗಳು ಅವರ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ, ಲೋಕವೂ, ಅದರ ನಿವಾಸಿಗಳೆಲ್ಲವೂ ಅವರ ಮುಂದೆ ನಡುಗುತ್ತವೆ.</verse>
				<verse number="6">ಅವರ ರೌದ್ರದ ಎದುರಿಗೆ ಯಾರು ನಿಲ್ಲುವರು? ಅವರ ರೋಷಾಗ್ನಿಯಲ್ಲಿ ಯಾರು ನಿಂತುಕೊಳ್ಳುವರು? ಅವರ ಕೋಪಾಗ್ನಿ ಬೆಂಕಿಯ ಹಾಗೆ ಸುರಿಸಲಾಗಿದೆ; ಬಂಡೆಗಳು ಆತನ ಮುಂದೆ ಕೆಡವಲಾಗಿವೆ.</verse>
				<verse number="7">ಯೆಹೋವ ದೇವರು ಒಳ್ಳೆಯವರು. ಇಕ್ಕಟ್ಟಿನ ದಿವಸದಲ್ಲಿ ಆಶ್ರಯದಾತರಾಗಿದ್ದಾರೆ. ತಮ್ಮಲ್ಲಿ ನಂಬಿಕೆ ಇಡುವವರನ್ನು ಅವರು ಪರಿಪಾಲಿಸುತ್ತಾರೆ.</verse>
				<verse number="8">ಆದರೆ ಮೇರೆ ಮೀರುವ ಪ್ರಳಯದಿಂದ ನಿನೆವೆಯನ್ನು ಮುಗಿಸಿಬಿಡುವರು. ಕತ್ತಲೆ ಅವರ ಶತ್ರಗಳನ್ನು ಹಿಂದಟ್ಟುವುದು.</verse>
				<verse number="9">ಯೆಹೋವ ದೇವರಿಗೆ ವಿರೋಧವಾಗಿ ಅವರು ಏನೇನು ಯೋಚಿಸಿರುವರೋ, ಅದನ್ನು ಅವರು ಅಂತ್ಯಗೊಳಿಸುವರು. ತೊಂದರೆಯು ಎರಡು ಸಾರಿ ಏಳದು.</verse>
				<verse number="10">ಅವರು ಮುಳ್ಳುಗಳಲ್ಲಿ ಸಿಕ್ಕಿಕೊಳ್ಳುವರು, ತಮ್ಮ ದ್ರಾಕ್ಷಾರಸದಿಂದ ಮತ್ತರಾಗುವರು. ಪೂರ್ಣವಾಗಿ ಒಣಗಿದ ಕೂಳೆಯಂತೆ ಅವರು ಸುಟ್ಟು ಹೋಗುವರು.</verse>
				<verse number="11">ನಿನೆವೆಯೇ ಯೆಹೋವ ದೇವರಿಗೆ ವಿರೋಧವಾಗಿ ದುರಾಲೋಚನೆ ಮಾಡಿ, ಕೇಡನ್ನು ಯೋಚಿಸುವವನು ನಿನ್ನೊಳಗಿಂದ ಹೊರಟಿದ್ದಾನೆ.</verse>
				<verse number="12">ಯೆಹೋವ ದೇವರು ಹೀಗೆ ಹೇಳುತ್ತಾರೆ: ಅವರೊಂದಿಗೆ ಒಪ್ಪಂದ ಮಾಡಿಕೊಂಡವರಿದ್ದರೂ, ಅವರು ಬಹುಮಂದಿಯಾಗಿದ್ದರೂ ನಾಶಕ್ಕೆ ಒಳಗಾಗುವರು. ಯೆಹೂದವೇ, ನಾನು ನಿನ್ನನ್ನು ಕಷ್ಟಪಡಿಸಿದಾಗ್ಯೂ, ಇನ್ನು ಮೇಲೆ ಕಷ್ಟಪಡಿಸೆನು.</verse>
				<verse number="13">ನಾನು ಈಗ ನಿನ್ನ ಮೇಲಿನ ಅವರ ನೊಗವನ್ನು ಮುರಿದು, ನಿನ್ನ ಬಂಧನಗಳನ್ನು ಹರಿದುಬಿಡುವೆನು.</verse>
				<verse number="14">ನಿನೆವೆಯೇ, ನಿನ್ನ ವಿಷಯವಾಗಿ ಯೆಹೋವ ದೇವರು ಆಜ್ಞಾಪಿಸುವುದೇನೆಂದರೆ: ಹೆಸರೆತ್ತಲು ನಿನಗೆ ಸಂತಾನವಿಲ್ಲದಂತೆ ಮಾಡುವೆನು. ನಿನ್ನ ದೇವರ ಮಂದಿರದಲ್ಲಿರುವ ಕೆತ್ತಿದ ವಿಗ್ರಹವನ್ನೂ, ಎರಕ ಬೊಂಬೆಯನ್ನೂ ನಾಶಮಾಡುವೆನು. ನೀನು ತುಚ್ಛನಾದದ್ದರಿಂದ ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು.</verse>
				<verse number="15">ಇಗೋ, ಪರ್ವತಗಳ ಮೇಲೆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಹರಕೆಗಳನ್ನು ಸಲ್ಲಿಸು. ಏಕೆಂದರೆ ಇನ್ನು ಮೇಲೆ ದುಷ್ಟರು ನಿನ್ನ ಮೇಲೆ ಮುತ್ತಿಗೆ ಹಾಕರು. ಅವರು ಸಂಪೂರ್ಣವಾಗಿ ನಾಶವಾಗುವರು.</verse>
			</chapter>
			<chapter number="2">
				<verse number="1">ನಿನೆವೆಯೇ, ಮುತ್ತಿಗೆ ಹಾಕುವವನು ನಿನಗೆ ವಿರೋಧವಾಗಿ ಹೊರಟಿದ್ದಾನೆ, ಕೋಟೆಯನ್ನು ಭದ್ರಪಡಿಸು; ದಾರಿಯನ್ನು ಕಾಯಿ; ನಡುವನ್ನು ಬಲಪಡಿಸಿಕೋ; ನಿನ್ನ ಶಕ್ತಿಯನ್ನು ಬಲವಾಗಿ ಗಟ್ಟಿಮಾಡಿಕೋ.</verse>
				<verse number="2">ಯೆಹೋವ ದೇವರು ಯಾಕೋಬಿನ ಹೆಚ್ಚಳವನ್ನು ಇಸ್ರಾಯೇಲಿನ ಹೆಚ್ಚಳದ ಹಾಗೆಯೇ ಪುನಃ ಸ್ಥಾಪಿಸುತ್ತಾರೆ. ನಾಶಕರು ಅವುಗಳನ್ನು ನಾಶಮಾಡಿದರೂ ಅವರ ದ್ರಾಕ್ಷಿಬಳ್ಳಿಗಳನ್ನು ಕೆಡಿಸಿದ್ದಾರೆ.</verse>
				<verse number="3">ಸೈನಿಕರ ಗುರಾಣಿಗಳು ಕೆಂಪಾಗಿವೆ; ಯುದ್ಧವೀರರು ರಕ್ತವರ್ಣದ ಬಟ್ಟೆ ಧರಿಸಿದ್ದಾರೆ; ಆತನು ಸಿದ್ಧಮಾಡುವ ದಿವಸದಲ್ಲಿ, ರಥಗಳ ಉಕ್ಕು ಥಳಥಳಿಸುವುದು, ತುರಾಯಿ ಮರದಿಂದ ಮಾಡಿದ ಈಟಿಗಳು ಝಳಪಿಸುವುವು;</verse>
				<verse number="4">ರಥಗಳು ಬೀದಿಗಳಲ್ಲಿ ಬಿರುಗಾಳಿಯಂತೆ ಓಡಾಡುತ್ತವೆ, ಅವು ಚೌಕಗಳಲ್ಲಿ ವೇಗವಾಗಿ ಹಿಂದಕ್ಕೆ ಮತ್ತು ಮುಂದಕ್ಕೆ ನುಗ್ಗುತ್ತವೆ. ಅವು ಉರಿಯುವ ಪಂಜುಗಳಂತೆ ಕಾಣುತ್ತವೆ; ಅವರು ಮಿಂಚಿನಂತೆ ಸುತ್ತಾಡುತ್ತಾರೆ.</verse>
				<verse number="5">ನಿನೆವೆಯು ತನ್ನ ಸೇನಾಪತಿಗಳನ್ನು ಕರೆಕಳುಹಿಸಿದ್ದಾನೆ. ಅವರು ತಮ್ಮ ನಡೆಯಲ್ಲಿ ಎಡವುವರು. ಅವರು ಸುಣ್ಣದ ಗೋಡೆಯ ಬಳಿಗೆ ತ್ವರೆಯಾಗಿ ಬರುವರು. ರಕ್ಷಣಾತ್ಮಕ ಗುರಾಣಿಯನ್ನು ಸಿದ್ಧ ಮಾಡಲಾಗಿದೆ.</verse>
				<verse number="6">ನದಿಗಳ ಬಾಗಿಲುಗಳು ತೆರೆಯಲಾಗಿವೆ; ಅರಮನೆ ಬಿದ್ದುಹೋಗುವುದು.</verse>
				<verse number="7">ನಿನೆವೆಯು ಸೆರೆಯಾಗಿ ಹೋಗಬೇಕೆಂಬ ಆಜ್ಞೆಯಾಗಿದೆ. ಅವಳ ದಾಸಿಯರು ಪಾರಿವಾಳಗಳಂತೆ ರೋದಿಸುವರು, ತಮ್ಮ ಎದೆಗಳನ್ನು ಬಡಿದುಕೊಳ್ಳುವರು.</verse>
				<verse number="8">ನಿನೆವೆ ಹುಟ್ಟಿದಂದಿನಿಂದ ನೀರಿನ ಕೆರೆಯ ಹಾಗಿತ್ತು. ಅದರ ನೀರು ಹರಿದು ಖಾಲಿಯಾಗುತ್ತಲಿದೆ. “ನಿಲ್ಲಿರಿ! ನಿಲ್ಲಿರಿ!” ಎಂದು ಅವರು ಕೂಗಿದರೂ, ಒಬ್ಬನೂ ಹಿಂದಕ್ಕೆ ನೋಡುವುದಿಲ್ಲ.</verse>
				<verse number="9">ಬೆಳ್ಳಿಯನ್ನು ಸುಲಿದುಕೊಳ್ಳಿರಿ; ಬಂಗಾರವನ್ನು ಸುಲಿದುಕೊಳ್ಳಿರಿ. ಕೂಡಿಸಿಟ್ಟ ಧನಕ್ಕೂ, ಸಕಲ ವಿಧವಾದ ಶ್ರೇಷ್ಠ ವಸ್ತುಗಳ ನಿಧಿಗೂ ಪಾರವೇ ಇಲ್ಲ.</verse>
				<verse number="10">ನಿನೆವೆ ಬರಿದಾಗಿದೆ, ಸುಲಿಗೆಯಾಗಿದೆ, ಹಾಳುಬಿದ್ದಿದೆ, ಹೃದಯಗಳು ಕರಗುತ್ತವೆ; ಮೊಣಕಾಲುಗಳು ಒಟ್ಟಾಗಿ ಬಡಿದುಕೊಳ್ಳುತ್ತವೆ. ಎಲ್ಲರ ಸೊಂಟಗಳಲ್ಲಿ ಸಂಕಟವಿದೆ; ಎಲ್ಲಾ ಮುಖಗಳು ಕಳೆಗುಂದುತ್ತವೆ.</verse>
				<verse number="11">ಸಿಂಹದ ಗವಿಯೂ, ಎಳೆಯ ಸಿಂಹಗಳು ಮೇಯುವ ಸ್ಥಳವೂ ಎಲ್ಲಿ? ಸಿಂಹವೂ, ಸಿಂಹಿಣಿಯೂ, ಸಿಂಹದ ಮರಿಗಳೂ ಭಯವಿಲ್ಲದೆ ನಡೆದಾಡುವ ಸ್ಥಳಗಳೆಲ್ಲಿ?</verse>
				<verse number="12">ಸಿಂಹವು, ತನ್ನ ಮರಿಗಳಿಗೆ, ಸಿಂಹಿಣಿಗಳಿಗೆ, ಕೊರಳು ಹಿಸುಕಿ ಕೊಂದ ಪ್ರಾಣಿಗಳಿಂದ ತನ್ನ ಗುಹೆಯನ್ನು ತುಂಬಿಸುತ್ತಿತ್ತು.</verse>
				<verse number="13">ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ರಥಗಳನ್ನು ಹೊಗೆಯಾಗಲು ಸುಡುತ್ತೇನೆ. ಖಡ್ಗವು ನಿನ್ನ ಎಳೆಯ ಸಿಂಹಗಳನ್ನು ನುಂಗಿಬಿಡುವುದು. ನಿನಗೆ ಸಿಕ್ಕಿದ ಬೇಟೆಯನ್ನು ಭೂಮಿಯ ಮೇಲಿನಿಂದ ತೆಗೆದುಬಿಡುತ್ತೇನೆ. ನಿನ್ನ ರಾಯಭಾರಿಗಳ ಧ್ವನಿಯು ಇನ್ನು ಕೇಳಿಸದು.”</verse>
			</chapter>
			<chapter number="3">
				<verse number="1">ರಕ್ತಮಯ ಪಟ್ಟಣಕ್ಕೆ ಕಷ್ಟ, ಅದೆಲ್ಲಾ ಸುಳ್ಳಿನಿಂದಲೂ, ಕಳ್ಳತನದಿಂದಲೂ ತುಂಬಿದೆ, ಕೊಳ್ಳೆಯನ್ನೂ ಬಿಡುವುದಿಲ್ಲ.</verse>
				<verse number="2">ಚಾವಟಿಗೆ, ಚಬುಕಿನ ಶಬ್ದವೂ, ಚಕ್ರಗಳ ಧಡಧಡನೆಯ ಶಬ್ದವೂ, ಕುದುರೆಗಳ ಕುಣಿದಾಟವೂ, ರಥಗಳ ಹಾರಾಟವೂ ಇದೆ.</verse>
				<verse number="3">ಸವಾರರು ಹತ್ತುತ್ತಾರೆ, ಈಟಿಗಳು ಥಳಥಳಿಸುತ್ತವೆ, ಖಡ್ಗಗಳು ಮಿಂಚುತ್ತವೆ, ಹತರಾದವರು ಬಹಳ; ಹೆಣಗಳ ರಾಶಿ; ಅಸಂಖ್ಯಾತ ಮೃತ ದೇಹಗಳು, ಶವಗಳ ಮೇಲೆ ತತ್ತರಿಸುತ್ತಿರುವ ಜನರು,</verse>
				<verse number="4">ಇದೆಲ್ಲವೂ ಆ ಒಬ್ಬ ವೇಶ್ಯೆಯ ಕಾಮತೃಷೆಯಿಂದಾಗಿ, ವೇಶ್ಯೆಯು ಲೆಕ್ಕವಿಲ್ಲದ ವೇಶ್ಯಾವಾಟಿಕೆಯ ಬಹಳ. ಅವಳು ತನ್ನ ಸೂಳೆತನಗಳಿಂದ ಜನಾಂಗಗಳನ್ನೂ, ತನ್ನ ಮಾಟಗಳಿಂದ ಗೋತ್ರಗಳನ್ನೂ ಗುಲಾಮರನ್ನಾಗಿ ಮಾಡಿಕೊಂಡಳಲ್ಲವೇ?</verse>
				<verse number="5">ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ. ನಿನ್ನ ಸೆರಗುಗಳನ್ನು ನಿನ್ನ ಮುಖದ ಮೇಲಿಂದ ಎತ್ತಿ, ಜನಾಂಗಗಳಿಗೆ ನಿನ್ನ ನಾಚಿಕೆಯನ್ನೂ, ರಾಜ್ಯಗಳಿಗೆ ನಿನ್ನ ನಿಂದೆಯ ಬೆತ್ತಲೆತನವನ್ನೂ ತೋರಿಸುತ್ತೇನೆ.</verse>
				<verse number="6">ಅಸಹ್ಯವಾದವುಗಳನ್ನು ನಿನ್ನ ಮೇಲೆ ಹಾಕಿ, ನಿನ್ನನ್ನು ನೀಚಳನ್ನಾಗಿ ಮಾಡಿ, ನಿನ್ನನ್ನು ಪರಿಹಾಸ್ಯಕ್ಕೀಡುಮಾಡುವೆನು.</verse>
				<verse number="7">ನಿನ್ನನ್ನು ನೋಡುವವರೆಲ್ಲರೂ ನಿನ್ನಿಂದ ಓಡಿಹೋಗಿ ಹೀಗೆ ಹೇಳುವರು, ‘ನಿನೆವೆ ಹಾಳಾಯಿತು, ಅದಕ್ಕೆ ಯಾರು ಚಿಂತೆಪಡುವರು?’ ನಿನ್ನನ್ನು ಆದರಿಸುವವರನ್ನು ನಾನು ಎಲ್ಲಿಂದ ಹುಡುಕಲಿ.”</verse>
				<verse number="8">ನೈಲ್ ನದಿಯ ಬಳಿ ನೆಲೆಯಾಗಿದ್ದ ತೆಬೆಸ್ಸಿಗಿಂತ ನೀನು ಒಳ್ಳೆಯವಳೋ? ಅವಳ ಸುತ್ತಲೂ ನೀರಿತ್ತು. ನದಿ ಅವಳ ರಕ್ಷಣೆ, ನೀರು ಅವಳ ಗೋಡೆ.</verse>
				<verse number="9">ಕೂಷ್ ಮತ್ತು ಈಜಿಪ್ಟ್ ಅವಳ ಅಪಾರ ಬಲವಾಗಿದ್ದವು. ಪೂಟರೂ, ಲಿಬಿಯದವರೂ ಅವಳ ಸಹಾಯಕರಾಗಿದ್ದರು.</verse>
				<verse number="10">ಆದರೆ ಅವಳು ಸೆರೆಯಾಗಿ ದೇಶಾಂತರಕ್ಕೆ ಹೋದಳು. ಅವಳ ಕೂಸುಗಳು ಸಹ ಎಲ್ಲಾ ಬೀದಿಗಳ ಮುಖ್ಯ ಸ್ಥಳಗಳಲ್ಲಿ ಅಪ್ಪಳಿಸಲಾಯಿತು. ಅವಳ ಪ್ರಧಾನರಿಗೋಸ್ಕರ ಚೀಟುಹಾಕಿದರು. ಅವಳ ಮಹನೀಯರೆಲ್ಲರನ್ನು ಸಂಕೋಲೆಗಳಿಂದ ಕಟ್ಟಿದರು.</verse>
				<verse number="11">ನೀನೂ ಸಹ ಅಮಲೇರಿ ಅಡಗಿಕೊಳ್ಳುವೆ; ನೀನೂ ಸಹ ಶತ್ರುವಿನ ನಿಮಿತ್ತ ಅಡಗಿಕೊಳ್ಳಲು ಆಶ್ರಯ ಸ್ಥಾನವನ್ನು ಹುಡುಕುವೆ.</verse>
				<verse number="12">ನಿನ್ನ ಕೋಟೆಗಳೆಲ್ಲಾ ಮೊದಲನೆಯ ಮಾಗಿದ ಹಣ್ಣುಳ್ಳ ಅಂಜೂರದ ಗಿಡಗಳ ಹಾಗಿರುವುವು. ಅಲ್ಲಾಡಿಸಿದರೆ ಹಣ್ಣು ತಿನ್ನುವವನ ಬಾಯಿಗೆ ಬೀಳುವುದು.</verse>
				<verse number="13">ಇಗೋ, ನಿನ್ನ ಸೈನ್ಯಗಳನ್ನು ನೋಡು. ಅವರೆಲ್ಲರೂ ಮಹಿಳೆಯರೇ. ನಿನ್ನ ದೇಶದ ಬಾಗಿಲುಗಳು ನಿನ್ನ ಶತ್ರುಗಳಿಗೆ ವಿಶಾಲವಾಗಿ ತೆರೆದಿವೆ. ಬೆಂಕಿ ನಿನ್ನ ಅಗುಳಿಗಳನ್ನು ತಿಂದುಬಿಟ್ಟಿದೆ.</verse>
				<verse number="14">ಮುತ್ತಿಗೆಗೋಸ್ಕರ ನೀರನ್ನು ಸೇದು; ನಿನ್ನ ಬಲವಾದ ಕೋಟೆಗಳನ್ನು ಭದ್ರಮಾಡು; ಕೆಸರಿನಲ್ಲಿ ಸೇರು; ಮಣ್ಣನ್ನು ತುಳಿ; ಇಟ್ಟಿಗೆ ಅಚ್ಚನ್ನು ಹಿಡಿ.</verse>
				<verse number="15">ಅಲ್ಲೇ ಬೆಂಕಿ ನಿನ್ನನ್ನು ತಿನ್ನುವುದು; ಖಡ್ಗವು ನಿನ್ನನ್ನು ಕಡಿದುಬಿಡುವುದು; ಹುಲ್ಲು ಮೇಯುವ ಹುಳ ನಿನ್ನನ್ನು ತಿಂದುಬಿಡುವುದು; ಬಹುಮಂದಿಯಾಗು, ಮಿಡತೆಗಳಂತೆ ಬಹುಮಂದಿಯಾಗು, ಗುಂಪು ಮಿಡತೆಗಳಂತೆ</verse>
				<verse number="16">ನಿನ್ನ ವರ್ತಕರನ್ನು ಆಕಾಶದ ನಕ್ಷತ್ರಗಳಿಗಿಂತ ಹೆಚ್ಚಾಗಿ ಸಂಖ್ಯೆಯಲ್ಲಿ ಬೆಳೆಸಿದ್ದೀ. ಆದರೆ ಅವರು ಮಿಡತೆಗಳಂತೆ ದೇಶವನ್ನು ಸುಲಿದುಕೊಂಡು ಹಾರಿಹೋಗುವರು.</verse>
				<verse number="17">ನಿನ್ನ ಕಾವಲುಗಾರರು ಮಿಡತೆಗಳ ಹಾಗೆಯೂ, ನಿನ್ನ ಅಧಿಪತಿಗಳು ತಂಪಾದ ದಿವಸದಲ್ಲಿ ಬೇಲಿಗಳೊಳಗೆ ಇಳಿದುಕೊಳ್ಳುವ ದೊಡ್ಡ ಮಿಡತೆಗಳ ಹಾಗೆಯೂ ಇದ್ದಾರೆ. ಸೂರ್ಯೋದಯವಾಗುವಾಗ ಹಾರಿ ಹೋಗುತ್ತವೆ. ಆಗ ಅವು ಎಲ್ಲಿದ್ದಾವೆಂದು ಅವುಗಳ ಸ್ಥಳವು ತಿಳಿಯುವುದಿಲ್ಲ.</verse>
				<verse number="18">ಅಸ್ಸೀರಿಯದ ಅರಸನೇ, ನಿನ್ನ ಕುರುಬರು ತೂಕಡಿಸುತ್ತಾರೆ. ನಿನ್ನ ಪ್ರಧಾನರು ವಿಶ್ರಾಂತಿಗೈಯುತ್ತಿದ್ದಾರೆ. ಕೂಡಿಸುವವರು ಯಾರೂ ಇಲ್ಲದಂತೆ ನಿನ್ನ ಜನರೆಲ್ಲರೂ ಬೆಟ್ಟಗಳಲ್ಲಿ ಚದರಿಹೋಗಿದ್ದಾರೆ.</verse>
				<verse number="19">ನಿನ್ನ ಗಾಯಕ್ಕೆ ಮದ್ದಿಲ್ಲ, ನಿನ್ನ ಗಾಯ ಪ್ರಾಣನಾಶಕ. ನಿನ್ನ ಸುದ್ದಿಯನ್ನು ಕೇಳುವವರೆಲ್ಲರೂ ನಿನ್ನ ಪತನಕ್ಕಾಗಿ ಕೈ ತಟ್ಟುವರು. ಏಕೆಂದರೆ ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಯಾರಿದ್ದಾರೆ?</verse>
			</chapter>
		</book>
		<book number="35">
			<chapter number="1">
				<verse number="1">ಪ್ರವಾದಿಯಾದ ಹಬಕ್ಕೂಕನು ಹೊಂದಿದ ಪ್ರವಾದನೆಯು:</verse>
				<verse number="2">ಯೆಹೋವ ದೇವರೇ, ನಾನು ಎಷ್ಟು ಕಾಲ ಸಹಾಯಕ್ಕಾಗಿ ಮೊರೆಯಿಡಬೇಕು. ನೀವು ನನ್ನ ಮೊರೆಗೆ ಎಷ್ಟು ಕಾಲ ಕಿವಿಗೊಡದಿರುವಿರಿ. “ಹಿಂಸೆಯಾಗುತ್ತಿದೆ,” ಎಂದು ಕೂಗುತ್ತಿದ್ದೇನೆ, ಆದರೂ ನೀವು ರಕ್ಷಿಸುವುದಿಲ್ಲ.</verse>
				<verse number="3">ಅನ್ಯಾಯವನ್ನು ನಾನು ನೋಡುವಂತೆ ಏಕೆ ಮಾಡುತ್ತೀರಿ? ತಪ್ಪನ್ನು ಏಕೆ ಸಹಿಸುತ್ತೀರಿ? ನಾಶವೂ ಹಿಂಸೆಯೂ ನನ್ನ ಮುಂದೆ ಇವೆ. ಹೋರಾಟವೂ ಒಡುಕೂ ಹೆಚ್ಚುತ್ತಲಿವೆ.</verse>
				<verse number="4">ಆದ್ದರಿಂದ ದೈವನಿಯಮವು ಪಕ್ಕಕ್ಕೆ ಇಡಲಾಗಿದೆ. ನ್ಯಾಯವು ಎಂದಿಗೂ ಸ್ಥಾಪಿತವಾಗುವುದಿಲ್ಲ. ಏಕೆಂದರೆ ದುಷ್ಟರು ನೀತಿವಂತರನ್ನು ಸುತ್ತಿಕೊಂಡಿದ್ದಾರೆ. ಆದ್ದರಿಂದ ತಪ್ಪಾಗಿ ನ್ಯಾಯತೀರ್ಪು ಹೊರಡುತ್ತದೆ.</verse>
				<verse number="5">“ಜನಾಂಗಗಳ ಕಡೆಗೆ ನೋಡಿ ಲಕ್ಷ್ಯಗೊಟ್ಟು ಬಹಳವಾಗಿ ಆಶ್ಚರ್ಯಪಡಿರಿ. ನಿಮ್ಮ ಜೀವಮಾನ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡಲಿದ್ದೇನೆ ಆ ಕಾರ್ಯವನ್ನು ವಿವರಿಸಿ ಹೇಳಿದರೂ ನೀವದನ್ನು ನಂಬುವುದಿಲ್ಲ.</verse>
				<verse number="6">ನಾನು ಬಾಬಿಲೋನಿಯರನ್ನು ಎಬ್ಬಿಸುತ್ತೇನೆ. ಅವರು ಉಗ್ರ ಮತ್ತು ಸಾಹಸಿ ಜನರು. ತಮ್ಮದಲ್ಲದ ನಿವಾಸಗಳನ್ನು ವಶಮಾಡಿಕೊಳ್ಳುವುದಕ್ಕೆ ವಿಶಾಲವಾದ ದೇಶದಲ್ಲಿ ಹಾದುಹೋಗುವರು.</verse>
				<verse number="7">ಅವರು ಭಯಂಕರವಾದವರು ಮತ್ತು ಕ್ರೂರವಾದವರು. ಅವರು ತಮಗೆ ತಾವೇ ಕಾನೂನಾಗಿದ್ದಾರೆ. ತಮ್ಮನ್ನು ತಾವೇ ಗೌರವಿಸಿಕೊಳ್ಳುವವರೂ ಆಗಿದ್ದಾರೆ.</verse>
				<verse number="8">ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿಯೂ, ಸಂಜೆಯ ತೋಳಗಳಿಗಿಂತ ಚುರುಕಾಗಿಯೂ ಇವೆ. ಅವರ ಅಶ್ವಸೈನ್ಯ ಎರಗುವುದು. ಅವರ ಕುದುರೆ ಸವಾರರು ದೂರದಿಂದ ಬರುವರು; ನುಂಗುವುದಕ್ಕೆ ತ್ವರೆಪಡುವ ಹದ್ದಿನಂತೆ ಹಾರಿ ಬರುವರು.</verse>
				<verse number="9">ಅವರೆಲ್ಲರು ಹಿಂಸಿಸುವುದಕ್ಕೆ ಬರುವರು; ಅವರ ಸಮೂಹ, ಮರುಭೂಮಿಯ ಗಾಳಿಯಂತೆಯೇ ಮುಂದೆ ಬರುವುದು; ಸೆರೆಯವರನ್ನು ಮರಳಿನ ಹಾಗೆ ಕೂಡಿಸುವರು.</verse>
				<verse number="10">ಅವರ ಅರಸನನ್ನು ಧಿಕ್ಕರಿಸುವರು; ಪ್ರಧಾನರು ಅವರನ್ನು ಪರಿಹಾಸ್ಯ ಮಾಡುವರು; ಕೋಟೆಗಳಿಗೆಲ್ಲಾ ಕುಚೋದ್ಯ ಮಾಡುವರು; ಮಣ್ಣಿನ ದಿನ್ನೆಗಳನ್ನು ಮಾಡಿ, ಅವುಗಳನ್ನು ಹಿಡಿಯುವರು.</verse>
				<verse number="11">ಬಿರುಗಾಳಿಯಂತೆ ಕೊಚ್ಚಿಕೊಳ್ಳುತ್ತಾ ಮುಂದೆ ಸಾಗುವರು. ಅಪರಾಧಿ ಜನರವರು. ಅವರ ಸ್ವಂತ ಬಲ, ಅವರ ದೇವರು.”</verse>
				<verse number="12">ಯೆಹೋವ ದೇವರೇ, ನೀವು ಅನಾದಿಕಾಲದಿಂದ ಬಂದವರಲ್ಲವೇ? ನನ್ನ ದೇವರೇ, ನನ್ನ ಪರಿಶುದ್ಧರೇ, ನೀನು ಎಂದಿಗೂ ಸಾಯುವುದಿಲ್ಲ. ಯೆಹೋವ ದೇವರೇ, ನ್ಯಾಯತೀರ್ಪನ್ನು ಜಾರಿಗೊಳಿಸಲು ಅವರನ್ನು ನೇಮಿಸಿದ್ದೀರಿ. ನನ್ನ ಬಂಡೆಯೇ, ನೀವು ಶಿಕ್ಷಿಸಲು ಅವರನ್ನು ನೇಮಕ ಮಾಡಿದ್ದೀರಿ.</verse>
				<verse number="13">ನೀನು ಕೆಟ್ಟದ್ದನ್ನು ನೋಡದ ಹಾಗೆ ಶುದ್ಧ ಕಣ್ಣುಗಳುಳ್ಳವರು. ನೀವು ಅನ್ಯಾಯವನ್ನು ದೃಷ್ಟಿಸಲಾರಿರಿ, ವಂಚಿಸುವವರನ್ನು ಏಕೆ ಸಹಿಸಿಕೊಳ್ಳುತ್ತೀರಿ? ದುಷ್ಟನು ತನಗಿಂತ ನೀತಿವಂತನನ್ನು ನುಂಗಿ ಬಿಡುವ ವೇಳೆಯಲ್ಲಿ ಏಕೆ ಸುಮ್ಮನಿರುತ್ತೀರಿ?</verse>
				<verse number="14">ಮನುಷ್ಯರನ್ನು ಸಮುದ್ರದ ಮೀನುಗಳಂತೆಯೂ, ಆಳುವವನಿಲ್ಲದ ಕ್ರಿಮಿಗಳಂತೆಯೂ ಮಾಡಿರುತ್ತೀರಿ.</verse>
				<verse number="15">ದುಷ್ಟ ವೈರಿಯು ಅವುಗಳನ್ನು ಗಾಳದಿಂದ ಎತ್ತಿ, ತನ್ನ ಬಲೆಯಿಂದ ಅವುಗಳನ್ನು ಹಿಡಿದು, ತನ್ನ ಜಾಲದಿಂದ ಅವುಗಳನ್ನು ಕೂಡಿಸಿಡುತ್ತಾನೆ. ಅವನು ಹಿಗ್ಗುತ್ತಾನೆ, ಸಂತೋಷಪಡುತ್ತಾನೆ.</verse>
				<verse number="16">ಆದ್ದರಿಂದ ತಮ್ಮ ಬಲೆಗೆ ಬಲಿ ಅರ್ಪಿಸಿ, ತಮ್ಮ ಜಾಲಕ್ಕೆ ಧೂಪವನ್ನು ಸುಡುತ್ತಾರೆ. ಏಕೆಂದರೆ ಇವುಗಳಿಂದ ಅವರ ಭೋಜನ ಪುಷ್ಟಿಯಾಗಿಯೂ, ಅವರ ಆಹಾರ ರುಚಿಯುಳ್ಳದ್ದಾಗಿಯೂ ಇದೆ.</verse>
				<verse number="17">ಹೀಗಿರುವುದರಿಂದ ನಿರಂತರವಾಗಿ ಅವರು ತಮ್ಮ ಬಲೆಯನ್ನು ಬರಿದುಮಾಡಿ, ಕರುಣೆ ಇಲ್ಲದೆ ಜನಾಂಗಗಳನ್ನು ನಾಶ ಮಾಡುತ್ತಾ ಅವನು ಹೋಗಬೇಕೇ?</verse>
			</chapter>
			<chapter number="2">
				<verse number="1">ನಾನು ಕಾವಲುಗಾರನಾಗಿ ನಿಲ್ಲುವೆನು. ಕಾವಲು ಗೋಪುರವನ್ನೇ ಹತ್ತಿ ನಿಂತುಕೊಳ್ಳುವೆನು. ಯೆಹೋವ ದೇವರು ನನಗೆ ಏನು ಹೇಳುವರೋ, ಯಾವ ಉತ್ತರ ಕೊಡುವರೋ, ಎಂದು ಎದುರು ನೋಡುವೆನು.</verse>
				<verse number="2">ಆಗ ಯೆಹೋವ ದೇವರು ನನಗೆ ಉತ್ತರಕೊಟ್ಟರು. ಪ್ರಕಟನೆಯನ್ನು ಬರೆ. ಅದನ್ನು ಓದುವವನು ಶೀಘ್ರವಾಗಿ ಓದುವಂತೆ, ಅದನ್ನು ಹಲಗೆಗಳ ಮೇಲೆ ಕೆತ್ತು.</verse>
				<verse number="3">ಏಕೆಂದರೆ ಪ್ರಕಟನೆಯು ಇನ್ನೂ ನೇಮಕವಾದ ಕಾಲಕ್ಕಾಗಿ ಎದುರು ನೋಡುವುದು. ಅದು ಅಂತ್ಯದ ಬಗ್ಗೆ ಮಾತಾಡುವುದು. ಅದು ಸುಳ್ಳಾಗದು. ಅದು ತಡವಾದರೂ, ಅದಕ್ಕೆ ಕಾದುಕೊಂಡಿರು. ಏಕೆಂದರೆ ಅದು ತಡಮಾಡದೆ ನಿಶ್ಚಯವಾಗಿ ಬರುವುದು.</verse>
				<verse number="4">ಇಗೋ, ಹೆಚ್ಚಿಸಿಕೊಂಡವನ ಆತ್ಮವು ತನ್ನಲ್ಲಿ ಯಥಾರ್ಥವಲ್ಲ. ಆದರೆ ನೀತಿವಂತನು ತನ್ನ ನಂಬಿಕೆಯಿಂದಲೇ ಬದುಕುವನು.</verse>
				<verse number="5">ಇದಲ್ಲದೆ ದ್ರಾಕ್ಷಾರಸವು ಮೋಸಕರ. ಅವನು ಅಹಂಕಾರಿ, ಎಂದಿಗೂ ವಿಶ್ರಾಂತಿ ಹೊಂದನು. ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಳ್ಳುತ್ತಾನೆ. ಮರಣದ ಹಾಗಿದ್ದಾನೆ, ತೃಪ್ತಿಯಾಗುವುದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನರನ್ನು ತನ್ನ ಸೆರೆಯಾಳುಗಳಾಗಿ ಮಾಡಿಕೊಳ್ಳುತ್ತಾನೆ.</verse>
				<verse number="6">ಅವರೆಲ್ಲರೂ ಅವನನ್ನು ಅಪಹಾಸ್ಯದ ಮಾತುಗಳಿಂದ ಅವಮಾನ ಮಾಡುವುದಿಲ್ಲವೋ? ಕದ್ದುಕೊಂಡ ವಸ್ತುಗಳನ್ನು ರಾಶಿಯಾಗಿ ಕೂಡಿಸಿಟ್ಟುಕೊಳ್ಳುವವನಿಗೆ ಅಕ್ರಮ ಮಾರ್ಗದಿಂದ ಐಶ್ವರ್ಯವಂತನಾಗಿರುವವನಿಗೆ ಕಷ್ಟ. ಇದೆಷ್ಟರವರೆಗೆ ಮುಂದುವರಿಯಬೇಕು?</verse>
				<verse number="7">ನಿನ್ನ ಸಾಲಗಾರರು ಕ್ಷಣಮಾತ್ರದಲ್ಲಿ ಏಳರೋ? ಅವರು ಎಚ್ಚರಗೊಂಡು ನಿನಗೆ ಬೆದರಿಕೆ ಹಾಕುವರೋ? ಆಗ ನೀನು ಅವರಿಗೆ ಸುಲಿಗೆಯಾಗುವೆ.</verse>
				<verse number="8">ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ, ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು. ಏಕೆಂದರೆ ನೀನು ಮಾನವರ ರಕ್ತ ಸುರಿಸಿದ್ದಿ. ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿ ಇರುವುದೆಲ್ಲವನ್ನು ನಾಶಮಾಡಿದ್ದೀ.</verse>
				<verse number="9">ಅನ್ಯಾಯದ ಲಾಭದಿಂದ ತನ್ನ ನಿವಾಸ ಕಟ್ಟಿಕೊಳ್ಳುವವನಿಗೂ, ತನ್ನ ಗೂಡನ್ನು ಉನ್ನತದಲ್ಲಿಡುವವನಿಗೂ, ನಾಶದ ಹಿಡಿತದಿಂದ ತಪ್ಪಿಸಿಕೊಳ್ಳಬಯಸುವವನಿಗೂ ಕಷ್ಟ!</verse>
				<verse number="10">ನೀನು ಬಹು ಜನಾಂಗಗಳನ್ನು ನಿರ್ಮೂಲ ಮಾಡಿದ್ದು, ನಿನ್ನ ಕುಲಕ್ಕೆ ಅವಮಾನವನ್ನೇ ಆಲೋಚಿಸಿಕೊಂಡ ಹಾಗಾಯಿತು. ನಿನಗೆ ನೀನೇ ಕೆಡುಕು ಮಾಡಿಕೊಂಡಿದ್ದೀ.</verse>
				<verse number="11">ಗೋಡೆಯೊಳಗಿಂದ ಕಲ್ಲು ಕೂಗುತ್ತದೆ. ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ.</verse>
				<verse number="12">ಊರನ್ನು ನರಹತ್ಯದಿಂದ ಕಟ್ಟಿ, ಪಟ್ಟಣವನ್ನು ಅನ್ಯಾಯದಿಂದ ಸ್ಥಾಪಿಸುವವನಿಗೆ ಕಷ್ಟ!</verse>
				<verse number="13">ಜನರ ಶ್ರಮೆಯು ಬೆಂಕಿಗೆ ತುತ್ತಾಗುವುದು. ಜನಾಂಗಗಳು ವ್ಯರ್ಥವಾಗಿ ದಣಿದುಕೊಳ್ಳುತ್ತವೆ. ಇದು ಸೇನಾಧೀಶ್ವರ ಯೆಹೋವ ದೇವರ ಚಿತ್ತವಷ್ಟೆ.</verse>
				<verse number="14">ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ಮಹಿಮೆಯ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.</verse>
				<verse number="15">ನಿನ್ನ ರೋಷವನ್ನು ಪಾನಕಕ್ಕೆ ಬೆರಸಿ, ನಿನ್ನ ನೆರೆಯವರಿಗೆ ಕುಡಿಸಿ, ಅವರ ಬೆತ್ತಲೆತನವನ್ನು ನೋಡಬೇಕೆಂದು ಅವರನ್ನು ಅಮಲೇರಿಸಿದವನೇ, ಅಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ!</verse>
				<verse number="16">ಮಹಿಮೆಯ ಬದಲಾಗಿ ನಾಚಿಕೆಯಿಂದ ನೀನು ತುಂಬಿರುವೆ. ಈಗ ನಿನ್ನ ಸರದಿ, ಕುಡಿದು ಬೆತ್ತಲೆಯಾಗು. ಯೆಹೋವ ದೇವರ ಬಲಗೈಯಲ್ಲಿನ ಪಾತ್ರೆ ನಿನ್ನ ಕಡೆಗೆ ತಿರುಗುವುದು. ನಿನ್ನ ಘನತೆಯನ್ನು ಅವಮಾನವು ಮುಚ್ಚುವುದು.</verse>
				<verse number="17">ಲೆಬನೋನಿನ ಮೇಲೆ ಮಾಡಿದ ಬಲಾತ್ಕಾರವು ನಿನ್ನನ್ನು ಚಕಿತಗೊಳಿಸುವುದು. ಮೃಗಗಳ ನಾಶವು ನಿನ್ನನ್ನು ಹೆದರಿಸುವುದು. ಏಕೆಂದರೆ ನೀನು ಮನುಷ್ಯರ ರಕ್ತ ಸುರಿಸಿದ್ದೀ; ನೀನು ನಾಡುಗಳನ್ನು, ಪಟ್ಟಣಗಳನ್ನು, ಅವುಗಳಲ್ಲಿರುವ ಎಲ್ಲವುಗಳನ್ನು ನಾಶಮಾಡಿದ್ದೀ.</verse>
				<verse number="18">“ಮನುಷ್ಯನು ಕೆತ್ತಿ ರೂಪಿಸಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ ಪ್ರತಿಮೆಯ ಬೆಲೆಯೇನು? ಅದನ್ನು ರೂಪಿಸಿದವನು, ತನ್ನ ಸ್ವಂತ ಸೃಷ್ಟಿಯನ್ನು ನಂಬುತ್ತಾನೆ. ಮಾತನಾಡದಂಥ ಮೂರ್ತಿಗಳನ್ನು ಅವನು ಮಾಡುತ್ತಾನೆ.</verse>
				<verse number="19">ಮರಕ್ಕೆ, ‘ಎಚ್ಚರವಾಗು!’ ಮೂಕವಾದ ಕಲ್ಲಿಗೆ, ‘ಎದ್ದೇಳು!’ ಎಂದು ಹೇಳುವವನಿಗೆ ಕಷ್ಟ! ಅದು ಮಾರ್ಗದರ್ಶನ ನೀಡುವುದೇ? ಅದು ಬಂಗಾರ, ಬೆಳ್ಳಿಯಿಂದ ಹೊದಿಸಿದ್ದಾರೆ. ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.”</verse>
				<verse number="20">ಆದರೆ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ. ಅವರ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.</verse>
			</chapter>
			<chapter number="3">
				<verse number="1">ಶಿಗ್ಯೋನೋತ ಸ್ವರದ ಮೇಲೆ ಪ್ರವಾದಿಯಾದ ಹಬಕ್ಕೂಕನ ಪ್ರಾರ್ಥನೆ.</verse>
				<verse number="2">ಯೆಹೋವ ದೇವರೇ, ನಿಮ್ಮ ಕೀರ್ತಿಯನ್ನು ನಾನು ಕೇಳಿದ್ದೇನೆ, ಯೆಹೋವ ದೇವರೇ, ನಿಮ್ಮ ಕಾರ್ಯಗಳಿಗಾಗಿ ನಿಮ್ಮ ಮುಂದೆ ಭಯಭಕ್ತಿಯಿಂದ ನಿಲ್ಲುತ್ತೇನೆ. ನಮ್ಮ ದಿನಗಳಲ್ಲಿ ಅವುಗಳನ್ನು ಪುನಃ ಮಾಡಿರಿ. ನಮ್ಮ ವರ್ಷಗಳ ಮಧ್ಯದಲ್ಲಿ ಅವುಗಳನ್ನು ತಿಳಿಸಿರಿ, ನೀನು ರೋಷಗೊಂಡಿದ್ದರೂ ಕರುಣೆಯನ್ನು ಜ್ಞಾಪಕಮಾಡಿಕೊಳ್ಳಿರಿ.</verse>
				<verse number="3">ದೇವರು, ತೇಮಾನಿನಿಂದಲೂ; ಪರಿಶುದ್ಧರು, ಪಾರಾನ್ ಪರ್ವತದಿಂದಲೂ ಬಂದರು. ಅವರ ಮಹಿಮೆ ಆಕಾಶಗಳನ್ನು ಮುಚ್ಚಿತು. ಅವರ ಸ್ತೋತ್ರವು ಭೂಮಿಯನ್ನು ತುಂಬಿಸಿತು.</verse>
				<verse number="4">ಅವರ ತೇಜಸ್ಸು ಸೂರ್ಯೋದಯದ ಹಾಗಿತ್ತು. ಕಿರಣಗಳು ಅವರ ಹಸ್ತಗಳಿಂದ ಮಿಂಚಿದವು. ಅದರಲ್ಲಿ ಅವರ ಬಲ ಅಡಗಿತ್ತು.</verse>
				<verse number="5">ಅವರ ಮುಂದೆ ವ್ಯಾಧಿಯು ಹೋಯಿತು. ವ್ಯಾಧಿಯು ಅವನ ಹೆಜ್ಜೆಗಳನ್ನು ಅನುಸರಿಸಿತು.</verse>
				<verse number="6">ಅವರು ನಿಂತುಕೊಂಡು ಭೂಮಿಯನ್ನು ನಡುಗಿಸಿದರು. ಅವರು ನೋಡಿ ಜನಾಂಗಗಳನ್ನು ನಡುಗುವಂತೆ ಮಾಡಿದರು. ಪುರಾತನ ಪರ್ವತಗಳು ಸೀಳಿಹೋದವು. ಹಳೆಯ ಕಾಲದ ಗುಡ್ಡಗಳು ಬಿದ್ದು ಹೋದವು. ಅವರ ಮಾರ್ಗಗಳು ನಿತ್ಯವಾದವುಗಳೇ.</verse>
				<verse number="7">ಕೂಷಾನಿನ ಡೇರೆಗಳು ಕಷ್ಟದಲ್ಲಿರುವುದನ್ನು ಕಂಡೆನು. ಮಿದ್ಯಾನಿನ ನಿವಾಸಗಳು ವೇದನೆಯಿಂದ ನಡುಗಿದವು.</verse>
				<verse number="8">ಯೆಹೋವ ದೇವರೇ, ನದಿಗಳ ಮೇಲೆ ರೌದ್ರಗೊಂಡಿರುವಿರೋ? ಪ್ರವಾಹಗಳ ಮೇಲೆ ನಿಮ್ಮ ಕೋಪವಿತ್ತೋ? ನೀವು ಕುದುರೆಗಳನ್ನು ಮತ್ತು ರಥಗಳನ್ನು ಮುನ್ನಡೆಸಿದಾಗ ವಿಜಯಕ್ಕೆ ನೀವು ಸಮುದ್ರದ ಮೇಲೆ ಕೋಪಗೊಂಡಿದ್ದೀರಾ?</verse>
				<verse number="9">ನಿನ್ನ ಬಿಲ್ಲನ್ನು ಹೊರ ತೆಗೆದಿ, ಅನೇಕ ಬಾಣಗಳಿಗಾಗಿ ಕರೆ ಕೊಟ್ಟಿದ್ದಿ, ಭೂಮಿಯನ್ನು ನದಿಗಳಿಂದ ಸೀಳಿಬಿಡುವೆ.</verse>
				<verse number="10">ಬೆಟ್ಟಗಳು ನಿನ್ನನ್ನು ಕಂಡು ನಡುಗಿದವು; ಜಲಪ್ರವಾಹವು ಹಾದುಹೋಯಿತು; ಸಾಗರವು ಗರ್ಜಿಸಿ; ತನ್ನ ತೆರೆಗಳನ್ನು ಮೇಲಕ್ಕೆ ಎತ್ತುತ್ತದೆ.</verse>
				<verse number="11">ನಿನ್ನ ಹಾರುವ ಬಾಣಗಳ ಬೆಳಗಿಗೂ, ನಿನ್ನ ಮಿಂಚುವ ಈಟಿಯ ಹೊಳಪಿಗೂ ಸೂರ್ಯ ಚಂದ್ರರು ಆಕಾಶದಲ್ಲಿ ಸ್ಥಿರವಾಗಿದ್ದಾರೆ.</verse>
				<verse number="12">ನೀನು ಸಿಟ್ಟಿನಿಂದ ದೇಶದ ಮೇಲೆ ನಡೆದುಹೋಗಿ, ಕೋಪದಿಂದ ಜನಾಂಗಗಳನ್ನು ತುಳಿದು ಹಾಕಿದ್ದೀಯೆ.</verse>
				<verse number="13">ನಿನ್ನ ಜನರ ರಕ್ಷಣೆಗೋಸ್ಕರವೂ, ನಿನ್ನ ಅಭಿಷಿಕ್ತನ ರಕ್ಷಣೆಗೋಸ್ಕರವೂ ಹೊರಗೆ ಹೊರಟು ಬಂದಿ. ದುಷ್ಟ ದೇಶದ ನಾಯಕನನ್ನು ನೀನು ತುಳಿದುಬಿಟ್ಟಿ. ತಲೆಯಿಂದ ಪಾದದವರೆಗೆ ಅವನನ್ನು ಬೆತ್ತಲೆ ಮಾಡಿದಿ.</verse>
				<verse number="14">ನಮ್ಮನ್ನು ಚದುರಿಸಲು ಅವನ ಯುದ್ಧವೀರರು ಮುತ್ತಿಗೆ ಹಾಕಿದಾಗ, ಅವನ ಸ್ವಂತ ಭರ್ಜಿಯಿಂದಲೇ ಅವನ ತಲೆಯನ್ನು ತಿವಿದಿ. ಅವರು ಅಡಗಿಕೊಂಡಿರುವ ಬಡವರನ್ನು ನುಂಗಲು ಬಂದವರೋ ಎಂಬಂತೆ ಬಂದಿದ್ದರಲ್ಲವೇ?</verse>
				<verse number="15">ನೀನು ನಿನ್ನ ಕುದುರೆಗಳ ಸಂಗಡ ಸಮುದ್ರದಲ್ಲಿಯೂ, ಮಹಾಜಲಗಳ ಸಮೂಹದಲ್ಲಿಯೂ ನಡೆದು ಹೋದೆ.</verse>
				<verse number="16">ನಾನು ಕೇಳಿದಾಗ ನನ್ನ ಹೃದಯ ಬಡಿದುಕೊಂಡಿತು; ಆ ಶಬ್ದಕ್ಕೆ ನನ್ನ ತುಟಿಗಳು ಕದಲಿದವು; ನನ್ನ ಎಲುಬುಗಳು ಕ್ಷಯಗೊಂಡವು; ನನ್ನ ಕಾಲುಗಳು ನಡುಗಿದವು; ಆದರೂ ನಮ್ಮ ಮೇಲೆ ದಾಳಿಮಾಡುವ ಜನರ ಮೇಲೆ ನಾಶನ ಬರುವುದನ್ನು ನೋಡಲು ತಾಳ್ಮೆಯಿಂದ ಕಾದಿರುವೆನು.</verse>
				<verse number="17">ಅಂಜೂರದ ಗಿಡವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಫಲಿಸದಿದ್ದರೂ, ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗಳು ಆಹಾರ ಕೊಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,</verse>
				<verse number="18">ನಾನು ಯೆಹೋವ ದೇವರಲ್ಲಿ ಉಲ್ಲಾಸಿಸುವೆನು. ನನ್ನ ರಕ್ಷಕರಾದ ದೇವರಲ್ಲಿ ಆನಂದಿಸುವೆನು.</verse>
				<verse number="19">ಸಾರ್ವಭೌಮ ಯೆಹೋವ ದೇವರು ನನ್ನ ಬಲವು. ಅವರು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ, ನನ್ನ, ಉನ್ನತ ಸ್ಥಳಗಳಲ್ಲಿ ನನ್ನನ್ನು ನಡೆಯುವಂತೆ ಮಾಡುತ್ತಾನೆ. ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.</verse>
			</chapter>
		</book>
		<book number="36">
			<chapter number="1">
				<verse number="1">ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ಕಾಲದಲ್ಲಿ ಕೂಷಿಯ ಮಗನೂ ಗೆದಲ್ಯನ ಮೊಮ್ಮಗನೂ ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವ ದೇವರು ದಯಪಾಲಿಸಿದ ವಾಕ್ಯ:</verse>
				<verse number="2">ಯೆಹೋವ ದೇವರು ಹೇಳುವುದೇನೆಂದರೆ, “ನಾನು ದೇಶದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶಮಾಡುವೆನು.”</verse>
				<verse number="3">“ಮನುಷ್ಯರನ್ನೂ ಮೃಗಗಳನ್ನೂ ನಾಶಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ನಾಶಮಾಡುವೆನು.” “ಮನುಷ್ಯರನ್ನು ದೇಶದೊಳಗಿಂದ ಕಡಿದು ಬಿಡುವಾಗ ದುಷ್ಟರಿಗೆ ಉಳಿಯುವುದು ಕಸದರಾಶಿಯೇ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="4">“ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚುವೆನು. ಈ ಸ್ಥಳದಲ್ಲಿ ಬಾಳನ ಪೂಜೆಗಳನ್ನು ಮತ್ತು ಉಳಿದಿರುವ ವಿಗ್ರಹಾರಾಧಕ ಯಾಜಕರ ಹೆಸರುಗಳನ್ನು ತೆಗೆದುಬಿಡುವೆನು.</verse>
				<verse number="5">ಮಾಳಿಗೆಗಳ ಮೇಲೆ ತಲೆಬಾಗಿಸಿ ಆಕಾಶದ ನಕ್ಷತ್ರಗಣಕ್ಕೆ ಆರಾಧಿಸುವವರನ್ನೂ ಯೆಹೋವ ದೇವರ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ</verse>
				<verse number="6">ಯೆಹೋವ ದೇವರನ್ನು ಅನುಸರಿಸದೆ ಹಿಂತಿರುಗಿ ಹೋಗುವವರನ್ನು ಯೆಹೋವ ದೇವರನ್ನು ಹುಡುಕದೆಯೂ ವಿಚಾರಿಸದೆಯೂ ಇರುವವರನ್ನೂ ಕಡಿದುಬಿಡುವೆನು.”</verse>
				<verse number="7">ಸಾರ್ವಭೌಮ ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಯೆಹೋವ ದೇವರ ದಿನವು ಸಮೀಪವಾಗಿದೆ. ಯೆಹೋವ ದೇವರು ಯಜ್ಞವನ್ನು ಸಿದ್ಧಮಾಡಿದ್ದಾರೆ. ಅವರು ಆಮಂತ್ರಿಸಿದವರನ್ನು ಅವರು ಪವಿತ್ರೀಕರಿಸಿದ್ದಾರೆ.</verse>
				<verse number="8">ಯೆಹೋವ ದೇವರ ಯಜ್ಞದ ದಿನದಲ್ಲಿ ನಾನು ಪ್ರಧಾನರನ್ನು, ರಾಜಪುತ್ರರನ್ನು ಮತ್ತು ವಿದೇಶಿಯರ ಉಡುಪನ್ನು ತೊಟ್ಟುಕೊಳ್ಳುವವರೆಲ್ಲರನ್ನೂ ದಂಡಿಸುವೆನು.</verse>
				<verse number="9">ಆ ದಿನದಲ್ಲಿ ಹೊಸ್ತಿಲನ್ನು ದಾಟುವವರೆಲ್ಲರನ್ನೂ ತಮ್ಮ ದೇವರುಗಳ ಆಲಯಗಳನ್ನು ಹಿಂಸಾಚಾರದಿಂದಲೂ ಮೋಸದಿಂದಲೂ ತುಂಬಿಸುವವರನ್ನೂ ದಂಡಿಸುವೆನು.</verse>
				<verse number="10">“ಆ ದಿನದಲ್ಲಿ, ಮೀನಿನ ಬಾಗಿಲಿನಿಂದ ಕೂಗಿನ ಶಬ್ದವೂ ಹೊಸ ಮನೆಯಿಂದ ಗೋಳಾಟವೂ ಗುಡ್ಡಗಳ ಕಡೆಯಿಂದ ಮುರಿಯುವ ಬಲವಾದ ಶಬ್ದವೂ ಕೇಳಿಬರುವುದು, ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="11">ಮಾರುಕಟ್ಟೆಗಳ ಜಿಲ್ಲೆಯಲ್ಲಿ ವಾಸಿಸುವವರೇ, ಗೋಳಾಡಿರಿ. ಏಕೆಂದರೆ ವರ್ತಕರ ಜನರೆಲ್ಲಾ ಸಂಹಾರವಾದರು. ಬೆಳ್ಳಿಯ ವ್ಯಾಪಾರಿಗಳೆಲ್ಲರೂ ನಾಶವಾದರು.</verse>
				<verse number="12">ಆ ಕಾಲದಲ್ಲಿ, ನಾನು ಯೆರೂಸಲೇಮನ್ನು ದೀಪಗಳಿಂದ ಹುಡುಕಿಬಿಡುವೆನು. ‘ಯೆಹೋವ ದೇವರು ಒಳ್ಳೆಯದನ್ನಾದರೂ ಕೆಟ್ಟದ್ದನ್ನಾದರೂ ಮಾಡುವುದಿಲ್ಲ’ ಎಂದುಕೊಂಡು ಮಡ್ಡಿಯ ಮೇಲೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನೂ ದಂಡಿಸುವೆನು.</verse>
				<verse number="13">ಆದ್ದರಿಂದ ಅವರ ಸಂಪತ್ತು ಕೊಳ್ಳೆಯಾಗುವುದು, ಅವರ ಮನೆಗಳು ಹಾಳಾಗುವುವು. ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಮಾಡರು. ದ್ರಾಕ್ಷಿತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.”</verse>
				<verse number="14">ಯೆಹೋವ ದೇವರ ಮಹಾದಿವಸವು ಸಮೀಪವಾಗಿದೆ, ಬಹು ತ್ವರೆಯಾಗಿ ಬರುತ್ತಿದೆ. ಕೇಳಿರಿ. ಯೆಹೋವ ದೇವರ ದಿನದಂದು ಕೂಗು ಕಹಿಯಾಗಿರುವುದು. ಶೂರನು ಅಲ್ಲಿ ಬೊಬ್ಬೆ ಹಾಕುವನು.</verse>
				<verse number="15">ಆ ದಿವಸವು ರೌದ್ರದ ದಿವಸವು, ಇಕ್ಕಟ್ಟು ಸಂಕಟಗಳ ದಿವಸವು, ಹಾಳುಪಾಳುಗಳ ದಿವಸವು, ಕತ್ತಲೆ ಮಬ್ಬುಗಳ ದಿವಸವು, ಕಾರ್ಮುಗಿಲ ಕಗ್ಗತ್ತಲ ದಿವಸವು,</verse>
				<verse number="16">ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಆರ್ಭಟಗಳ ದಿವಸವು.</verse>
				<verse number="17">“ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು. ಅವರು ಕುರುಡರ ಹಾಗೆ ತಡಕುವರು. ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದಾರೆ. ಅವರ ರಕ್ತವು ಧೂಳಿನಂತೆಯೂ ಅವರ ಮಾಂಸವು ಗೊಬ್ಬರದಂತೆಯೂ ಸುರಿದಿರುವುದು.</verse>
				<verse number="18">ಯೆಹೋವ ದೇವರ ರೌದ್ರದಿನದಂದು ಅವರ ಬೆಳ್ಳಿಯಾದರೂ ಅವರ ಬಂಗಾರವಾದರೂ ಅವರನ್ನು ರಕ್ಷಿಸಲಾರವು.” ಅವರ ಅಸೂಯೆಯ ಬೆಂಕಿಯು ದೇಶವನ್ನೆಲ್ಲಾ ನುಂಗುವುದು. ಏಕೆಂದರೆ ದೇಶದ ನಿವಾಸಿಗಳನ್ನೆಲ್ಲಾ ಬೇಗ ನಿರ್ಮೂಲ ಮಾಡಿಬಿಡುವರು.</verse>
			</chapter>
			<chapter number="2">
				<verse number="1">ನಾಚಿಕೆ ಇಲ್ಲದ ಜನಾಂಗದವರೇ, ಒಟ್ಟಾಗಿ ಕೂಡಿಕೊಳ್ಳಿರಿ, ನೀವು ಒಟ್ಟಾಗಿ ಕೂಡಿಕೊಳ್ಳಿರಿ,</verse>
				<verse number="2">ತೀರ್ಪು ಕಾರ್ಯಗತಗೊಳ್ಳುವ ಮುಂಚೆ ಮತ್ತು ಆ ದಿನವು ಗಾಳಿ ಬೀಸಿದ ಹೊಟ್ಟಿನಂತೆ ಹಾರಿಹೋಗುವುದಕ್ಕಿಂತ ಮುಂಚೆ ಯೆಹೋವ ದೇವರ ಉಗ್ರಕೋಪವು ನಿಮ್ಮ ಮೇಲೆ ಬರುವ ಮುಂಚೆ, ಯೆಹೋವ ದೇವರ ಕೋಪದ ದಿನವು ನಿಮ್ಮ ಮೇಲೆ ಬರುವ ಮುಂಚೆ,</verse>
				<verse number="3">ದೇಶದ ದೀನರೇ, ಅವರ ಆಜ್ಞೆಗಳನ್ನು ಕೈಕೊಂಡು ನಡೆಯುವವರೆಲ್ಲರೇ ಯೆಹೋವ ದೇವರನ್ನು ಹುಡುಕಿರಿ. ನೀತಿಯನ್ನು ಹುಡುಕಿರಿ, ವಿನಯವನ್ನು ಹುಡುಕಿರಿ. ಒಂದು ವೇಳೆ ಯೆಹೋವ ದೇವರ ಕೋಪದ ದಿವಸದಲ್ಲಿ ಆಶ್ರಯ ಹೊಂದುವಿರಿ.</verse>
				<verse number="4">ಗಾಜವು ಕೈಬಿಡಲಾಗುವುದು; ಅಷ್ಕೆಲೋನ್ ಹಾಳಾಗುವುದು; ಅಷ್ಡೋದನ್ನು ಮಧ್ಯಾಹ್ನದಲ್ಲಿ ಖಾಲಿಮಾಡುವರು, ಎಕ್ರೋನ್ ಕಿತ್ತೆಸೆಯಲಾಗುವುದು.</verse>
				<verse number="5">ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವ ದೇವರ ವಾಕ್ಯವು ನಿನಗೆ ವಿರುದ್ಧವಾಗಿದೆ, “ನಿನ್ನಲ್ಲಿ ನಿವಾಸಿಯೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು,” ಎಂದು ಅವರು ಹೇಳುತ್ತಾರೆ.</verse>
				<verse number="6">ಸಮುದ್ರದ ತೀರವು ಕುರುಬರು ಮೇಯಿಸುವ ಸ್ಥಳಗಳಾಗಿಯೂ ಕುಂಟೆಗಳಾಗಿಯೂ ಕುರಿಹಟ್ಟಿಗಳಾಗಿಯೂ ಇರುವುದು.</verse>
				<verse number="7">ಅದು ಯೆಹೂದದ ಮನೆತನದಲ್ಲಿ ಉಳಿದವರ ವಶವಾಗುವುದು. ಅದರ ಮೇಲೆ ಮೇಯಿಸುವರು. ಅಷ್ಕೆಲೋನಿನ ಮನೆತನಗಳಲ್ಲಿ ಸಾಯಂಕಾಲದಲ್ಲಿ ಅವರು ಮಲಗಿಕೊಳ್ಳುವರು. ಏಕೆಂದರೆ ಅವರ ದೇವರಾದ ಯೆಹೋವ ದೇವರು, ಅವರನ್ನು ಪರಿಪಾಲಿಸಿ, ಮತ್ತೆ ಏಳಿಗೆಗೆ ತರುವರು.</verse>
				<verse number="8">“ಮೋವಾಬಿನ ನಿಂದೆಯನ್ನೂ ಅಮ್ಮೋನ್ಯರ ಬೈಗಳವನ್ನೂ ಅವರು ನನ್ನ ಜನರನ್ನೂ ನಿಂದಿಸಿ, ಅವರ ಮೇರೆಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿಕೊಂಡದ್ದನ್ನೂ ನಾನು ಕೇಳಿದ್ದೇನೆ.</verse>
				<verse number="9">ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಜೀವದಾಣೆ,” “ನಿಶ್ಚಯವಾಗಿ ಮೋವಾಬು ಸೊದೋಮಿನ ಅಮ್ಮೋನ್ಯರು ಗೊಮೋರದ ಹಾಗೆ ಆಗುವುದು. ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಳಿಗಳುಳ್ಳಂಥ ನಿತ್ಯವಾಗಿ ಹಾಳಾದ ಸ್ಥಳವಾಗುವರು. ನನ್ನ ಜನರಲ್ಲಿ ಉಳಿದವರು ಅವರನ್ನು ಸುಲಿದುಕೊಳ್ಳುವರು. ನನ್ನ ಜನರಲ್ಲಿ ಮಿಕ್ಕಾದವರು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.”</verse>
				<verse number="10">ಅವರು ಸೇನಾಧೀಶ್ವರ ಯೆಹೋವ ದೇವರ ಜನರನ್ನು ಅವಮಾನಿಸಿ ಮತ್ತು ಅಪಹಾಸ್ಯ ಮಾಡಿದ್ದರಿಂದಲೇ ಅವರ ಗರ್ವಕ್ಕೋಸ್ಕರ ಇದೇ ಅವರಿಗೆ ಸಿಕ್ಕುವುದು.</verse>
				<verse number="11">ಅವರು ಭೂಮಿಯ ಎಲ್ಲಾ ದೇವರುಗಳನ್ನು ನಾಶಮಾಡುವಾಗ, ಯೆಹೋವ ದೇವರು ಅವರಿಗೆ ಭಯಂಕರವಾಗಿರುವರು. ಇತರ ಜನಾಂಗಗಳ ದ್ವೀಪಗಳವರೆಲ್ಲರು ತಮ್ಮ ತಮ್ಮ ಸ್ಥಳಗಳಲ್ಲಿ ಅವರನ್ನು ಆರಾಧಿಸುವರು.</verse>
				<verse number="12">ಕೂಷ್ ದೇಶದವರೇ, ನೀವೂ ಸಹ ನನ್ನ ಖಡ್ಗದಿಂದ ಹತರಾಗುವಿರಿ.</verse>
				<verse number="13">ಅವರು ತನ್ನ ಕೈಯನ್ನು ಉತ್ತರದ ಮೇಲೆ ಚಾಚಿ, ಅಸ್ಸೀರಿಯರನ್ನು ನಾಶಮಾಡಿ ನಿನೆವೆಯನ್ನು ಹಾಳಾಗಿಯೂ ಮರುಭೂಮಿಯಂತೆ ಒಣಗಿದ್ದಾಗಿಯೂ ಮಾಡುವರು.</verse>
				<verse number="14">ಅದು ದನಗಳ ಹಿಂಡುಗಳಿಗೂ ಕುರಿಗಳ ಮಂದೆಗಳಿಗೂ ಎಲ್ಲಾ ತರದ ಪ್ರಾಣಿಗಳಿಗೂ ಮಲಗುವ ಹಟ್ಟಿ ಆಗುವುದು, ಅದರ ಹಾಳುಬಿದ್ದ ಮನೆಯ ಕಂಬಗಳ ಮೇಲೆ ಗೂಬೆಗಳೂ, ಗುಬ್ಬಚ್ಚಿಗಳೂ ತಂಗುವುವು. ಗೂಬೆಯ ಘೂಂಕಾರವು ಕಿಟಕಿಗಳಿಂದ ಕೇಳಿಬರುವುದು, ಕಾಗೆಗಳ ಕೂಗು ಬಾಗಿಲಿನ ಹೊಸ್ತಿಲಲ್ಲೇ ಕೇಳುವುದು, ದೇವದಾರು ಮರದ ತೊಲೆಗಳು ಕಳಚಿಬೀಳುವುವು.</verse>
				<verse number="15">“ನಿಶ್ಚಿಂತೆಯಾಗಿ ವಾಸಿಸಿದಂಥ ಉಲ್ಲಾಸದ ಪಟ್ಟಣ ನಾನೇ ಹೊರತು ಮತ್ತೊಂದಿಲ್ಲಾ,” ಎಂದು ತನ್ನೊಳಗೆ ಎಂದುಕೊಂಡಂಥ ಸುಭದ್ರ ನಿನೆವೆ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದರಲ್ಲಿ ಹಾದುಹೋಗುವವರೆಲ್ಲರೂ ನಿಂದಿಸಿ ಅಪಹಾಸ್ಯ ಮಾಡುವರು.</verse>
			</chapter>
			<chapter number="3">
				<verse number="1">ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಕಷ್ಟ!</verse>
				<verse number="2">ಅವಳು ಯಾರಿಗೂ ವಿಧೇಯಳಾಗಲಿಲ್ಲ; ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ; ಯೆಹೋವ ದೇವರಲ್ಲಿ ಭರವಸೆ ಇಡಲಿಲ್ಲ; ತನ್ನ ದೇವರ ಸಮೀಪಕ್ಕೆ ಬರಲಿಲ್ಲ.</verse>
				<verse number="3">ಅವಳ ಪ್ರಮುಖರು ಗರ್ಜಿಸುವ ಸಿಂಹಗಳು. ಅವಳ ನ್ಯಾಯಾಧಿಪತಿಗಳು ಸಂಜೆಯ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.</verse>
				<verse number="4">ಅವಳ ಪ್ರವಾದಿಗಳು ಬಡಾಯಿ ಕೊಚ್ಚಿಕೊಳ್ಳುವವರೂ ವಿಶ್ವಾಸದ್ರೋಹಿಗಳೂ ಆಗಿದ್ದಾರೆ. ಅವಳ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರಮಾಡುತ್ತಾರೆ, ದೈವನಿಯಮವನ್ನು ಭಂಗಪಡಿಸುತ್ತಾರೆ.</verse>
				<verse number="5">ನೀತಿಯುಳ್ಳ ಯೆಹೋವ ದೇವರು ಅವಳ ಮಧ್ಯದಲ್ಲಿ ಇದ್ದಾರೆ. ಅವರು ಅನ್ಯಾಯ ಮಾಡುವುದಿಲ್ಲ; ಪ್ರತಿ ಬೆಳಿಗ್ಗೆ ತಮ್ಮ ನ್ಯಾಯತೀರ್ಪನ್ನು ಬೆಳಕಿಗೆ ತರುತ್ತಾರೆ; ಅವರು ತಪ್ಪುವವರಲ್ಲ. ಆದರೆ ಅನ್ಯಾಯವಂತನು ನಾಚಿಕೆಯನ್ನು ಅರಿಯನು.</verse>
				<verse number="6">“ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ. ಅವುಗಳ ಗೋಪುರಗಳು ಹಾಳಾಗಿವೆ. ಅವುಗಳ ಬೀದಿಗಳನ್ನು ಯಾರೂ ಹಾದುಹೋಗದ ಹಾಗೆ ಹಾಳುಮಾಡಿದ್ದೆನೆ. ಅವುಗಳ ಪಟ್ಟಣಗಳು ನಾಶವಾದವು. ಹೀಗೆ ಅಲ್ಲಿ ಯಾವನೂ ಇರುವುದಿಲ್ಲ; ಯಾವ ಮನುಷ್ಯನೂ ಅಲ್ಲಿ ವಾಸಿಸುವುದೂ ಇಲ್ಲ.</verse>
				<verse number="7">‘ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವೆ,’ ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ನಾಶವಾಗುವುದಿಲ್ಲ. ಆದರೆ ಅವರು ಬೇಗನೆ ಎದ್ದು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.</verse>
				<verse number="8">ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.</verse>
				<verse number="9">“ಆಗ ನಾನು ಜನರ ತುಟಿಗಳನ್ನು ಶುದ್ಧೀಕರಿಸುವೆನು. ಅವರೆಲ್ಲರೂ ಯೆಹೋವ ದೇವರ ಹೆಸರಿನಿಂದ ಮೊರೆಯಿಡುವರು. ಏಕಮನಸ್ಸಿನಿಂದ ಆತನಿಗೆ ಸೇವೆಮಾಡುವರು.</verse>
				<verse number="10">ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿಹೋದ ನನ್ನ ಜನರೂ ನನಗೆ ಕಾಣಿಕೆಗಳನ್ನು ತರುವರು.</verse>
				<verse number="11">ಆ ದಿವಸದಲ್ಲಿ ನೀನು ನನಗೆ ವಿರೋಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನಾಚಿಕೆಗೆ ಗುರಿಯಾಗುವುದಿಲ್ಲ; ಏಕೆಂದರೆ ಆಗ ಗರ್ವದಿಂದ ಹೊಗಳಿಕೊಳ್ಳುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕುವೆನು. ನನ್ನ ಪರಿಶುದ್ಧ ಪರ್ವತದಲ್ಲಿ ಇನ್ನು ಮೇಲೆ ನೀನು ಗರ್ವಪಡದೇ ಬಾಳುವೆ.</verse>
				<verse number="12">ಆದರೆ ನಿನ್ನ ಮಧ್ಯದಲ್ಲಿ ಸೌಮ್ಯರನ್ನೂ ದೀನರನ್ನೂ ಉಳಿಸುವೆನು. ಇವರು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಡುವರು.</verse>
				<verse number="13">ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯ ಮಾಡರು; ಸುಳ್ಳಾಡರು, ಅವರ ಬಾಯಲ್ಲಿ ಮೋಸವಿರದು. ಅವರು ಮಂದೆಯಂತೆ ಮೇದು ಮಲಗುವರು. ಅವರನ್ನು ಭಯಪಡಿಸುವವನು ಒಬ್ಬನೂ ಇರುವುದಿಲ್ಲ.”</verse>
				<verse number="14">ಚೀಯೋನಿನ ಪುತ್ರಿಯೇ, ಹಾಡು. ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಪುತ್ರಿಯೇ, ಪೂರ್ಣಹೃದಯದಿಂದ ಸಂಭ್ರಮಿಸಿ ಉಲ್ಲಾಸಪಡು.</verse>
				<verse number="15">ಯೆಹೋವ ದೇವರು ನಿನ್ನ ಶಿಕ್ಷೆಗಳನ್ನು ದೂರಮಾಡಿ ನಿನ್ನ ಶತ್ರುವನ್ನು ತೆಗೆದುಹಾಕಿದ್ದಾರೆ. ಇಸ್ರಾಯೇಲಿನ ಅರಸನಾದ ಯೆಹೋವ ದೇವರು ನಿನ್ನ ಮಧ್ಯದಲ್ಲಿ ಇದ್ದಾರೆ. ಇನ್ನು ಮೇಲೆ ನಿನಗೆ ಯಾವ ಕೇಡಿನ ಭಯವಿರುವುದಿಲ್ಲ.</verse>
				<verse number="16">ಆ ದಿವಸದಲ್ಲಿ ಯೆರೂಸಲೇಮಿಗೆ ಹೀಗೆಂದು ಹೇಳುವರು, “ಚೀಯೋನೇ, ನೀನು ಭಯಪಡಬೇಡ; ನಿನ್ನ ಕೈಗಳು ಬಲಹೀನವಾಗದಿರಲಿ.</verse>
				<verse number="17">ನಿನ್ನ ದೇವರಾದ ಯೆಹೋವ ದೇವರು ನಿನ್ನೊಂದಿಗಿದ್ದಾರೆ. ನಿನ್ನನ್ನು ರಕ್ಷಿಸಲು ಶಕ್ತರಾಗಿದ್ದಾರೆ. ನಿನ್ನಲ್ಲಿ ಬಹಳವಾಗಿ ಹರ್ಷಾನಂದಗೊಳ್ಳುವರು. ತಮ್ಮ ಪ್ರೀತಿಯ ನಿಮಿತ್ತ ಅವರು ಇನ್ನು ಮುಂದೆ ನಿನ್ನನ್ನು ಖಂಡಿಸುವುದಿಲ್ಲ, ಆದರೆ ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವರು.”</verse>
				<verse number="18">“ನೇಮಕವಾದ ಹಬ್ಬಗಳ ನಷ್ಟಕ್ಕಾಗಿರುವ ನಿಮ್ಮ ದುಃಖವನ್ನು ನಿಮ್ಮಿಂದ ನಾನು ತೆಗೆದುಬಿಡುವೆನು. ಅವು ನಿನಗೆ ಭಾರವಾಗಿಯೂ ನಿಂದೆಯಾಗಿಯೂ ಇದ್ದವು.</verse>
				<verse number="19">ಆ ಕಾಲದಲ್ಲಿ ನಿನ್ನನ್ನು ಪೀಡಿಸುವವರನ್ನೆಲ್ಲಾ ದಂಡಿಸುವೆನು, ಕುಂಟಾದದ್ದನ್ನು ರಕ್ಷಿಸಿ, ಚದರಿಹೋದವರನ್ನು ಕೂಡಿಸುವೆನು; ಅವರು ಅವಮಾನ ಹೊಂದಿದ ದೇಶಗಳಲ್ಲೆಲ್ಲಾ ಅವರಿಗೆ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.</verse>
				<verse number="20">ಆ ಕಾಲದಲ್ಲಿ ನಾನು ನಿಮ್ಮನ್ನು ಒಟ್ಟುಗೂಡಿಸುವೆನು. ಆ ಸಮಯದಲ್ಲಿ ನಾನು ಮನೆಗೆ ನಿಮ್ಮನ್ನು ಕರೆದುಕೊಂಡು ಬರುವೆನು. ನಾನು ನಿಮ್ಮ ಸೌಭಾಗ್ಯವನ್ನು ನಿಮ್ಮ ಕಣ್ಣೆದುರಿಗೆ ಪುನಃಸ್ಥಾಪಿಸಿ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆಯನ್ನೂ ಉಂಟುಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
			</chapter>
		</book>
		<book number="37">
			<chapter number="1">
				<verse number="1">ಪಾರಸಿಯ ಅರಸ ದಾರ್ಯಾವೆಷನ ಆಳಿಕೆಯ ಎರಡನೆಯ ವರ್ಷದಲ್ಲಿ, ಆರನೇ ತಿಂಗಳಿನ ಮೊದಲನೇ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮುಖಾಂತರ, ಶೆಯಲ್ತಿಯೇಲನ ಮಗನು ಮತ್ತು ಯೆಹೂದದ ಅಧಿಪತಿ ಆದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನು ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಬಂದಿತು:</verse>
				<verse number="2">“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಯೆಹೋವ ದೇವರ ಆಲಯವನ್ನು ಕಟ್ಟುವ ಕಾಲವು ಇನ್ನೂ ಬಂದಿಲ್ಲ,’ ಎಂದು ಈ ಜನರು ಅಂದುಕೊಳ್ಳುತ್ತಾರೆ.”</verse>
				<verse number="3">ಆಗ ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಬಂದಿತು:</verse>
				<verse number="4">“ಈ ಆಲಯ ಹಾಳುಬಿದ್ದಿರುವಾಗ, ನೀವು, ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವುದಕ್ಕೆ ಇದು ನಿಮಗೆ ಕಾಲವೋ?”</verse>
				<verse number="5">ಈಗ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಮಾರ್ಗಗಳನ್ನು ಆಲೋಚಿಸಿ ನೋಡಿರಿ.</verse>
				<verse number="6">ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ಸುಗ್ಗಿ ಮಾಡಿದ್ದೀರಿ; ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿಯಾಗಲಿಲ್ಲ; ಬಟ್ಟೆಯನ್ನು ಧರಿಸುತ್ತೀರಿ, ಆದರೆ ಬೆಚ್ಚಗೆ ಆಗಲಿಲ್ಲ; ಸಂಬಳ ಸಂಪಾದಿಸುತ್ತೀರಿ, ಅದನ್ನು ತೂತುಗಳುಳ್ಳ ಚೀಲಗಳಲ್ಲಿ ಹಾಕಿಡುತ್ತೀರಿ.”</verse>
				<verse number="7">ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ನಿಮ್ಮ ಮಾರ್ಗಗಳನ್ನು ಆಲೋಚಿಸಿ ನೋಡಿರಿ.</verse>
				<verse number="8">ಬೆಟ್ಟಕ್ಕೆ ಹೋಗಿ ಮರವನ್ನು ತಂದು, ಆಲಯವನ್ನು ಕಟ್ಟಿರಿ. ಆಗ ನಾನು ಅದಕ್ಕೆ ಮೆಚ್ಚಿ, ಮಹಿಮೆ ಹೊಂದುವೆನೆಂದು, ಯೆಹೋವ ದೇವರು ಹೇಳುತ್ತಾರೆ.</verse>
				<verse number="9">ಬಹಳ ಆಗಬೇಕೆಂದು ನೋಡಿಕೊಂಡಿರಿ. ಆದರೆ ಇದೋ ಕೊಂಚವು. ನೀವು ಇದನ್ನು ಮನೆಗೆ ತಂದಾಗ, ನಾನು ಅದರ ಮೇಲೆ ಊದಿ ಬಿಟ್ಟೆನು. ಏತಕ್ಕೆ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ನನ್ನ ಆಲಯವು ಹಾಳುಬಿದ್ದಿರುವಾಗ, ನೀವು ನಿಮ್ಮ ನಿಮ್ಮ ಸ್ವಂತ ಮನೆಗಳ ಕಡೆಗೆ ಹೆಚ್ಚು ಗಮನ ಕೊಡುತ್ತೀರಿ.</verse>
				<verse number="10">ಆದ್ದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ.</verse>
				<verse number="11">ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆಯೂ ಎಣ್ಣೆಯ ಮೇಲೆಯೂ ಭೂಮಿಯ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕೈಕಸುಬುಗಳ ಮೇಲೆಯೂ ಬರಗಾಲವನ್ನು ತಂದಿದ್ದೇನೆ.”</verse>
				<verse number="12">ಆಗ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನೂ ಜನರಲ್ಲಿ ಉಳಿದವರೆಲ್ಲರೂ ತಮ್ಮ ದೇವರಾದ ಯೆಹೋವ ದೇವರ ಮಾತನ್ನೂ ತಮ್ಮ ದೇವರಾದ ಯೆಹೋವ ದೇವರು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು. ಜನರು ಯೆಹೋವ ದೇವರಿಗೆ ಭಯಪಟ್ಟರು.</verse>
				<verse number="13">ಆಗ ಯೆಹೋವ ದೇವರ ಸೇವಕನಾದ ಹಗ್ಗಾಯನು, ಯೆಹೋವ ದೇವರ ಜನರಿಗೆ, “ನಾನು ನಿಮ್ಮ ಸಂಗಡ ಇದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ.</verse>
			</chapter>
			<chapter number="2">
				<verse number="1">ಏಳನೆಯ ತಿಂಗಳಿನ, ಇಪ್ಪತ್ತೊಂದನೆಯ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಬಂದಿತು:</verse>
				<verse number="2">“ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಇದನ್ನು ಹೇಳತಕ್ಕದ್ದು.</verse>
				<verse number="3">ಈ ಆಲಯದ ಅದರ ಪೂರ್ವದ ಮಹಿಮೆಯನ್ನು ನೋಡಿದವರೊಳಗೆ ಉಳಿದವನು ನಿಮ್ಮಲ್ಲಿ ಯಾರು ಇದ್ದಾರೆ? ಈಗ ಅದು ಹೇಗೆ ಕಾಣುತ್ತದೆ? ಇದು ನಿಮ್ಮ ದೃಷ್ಟಿಗೆ ಏನೂ ಇಲ್ಲದ ಹಾಗೆ ತೋರುತ್ತದಲ್ಲವೋ?</verse>
				<verse number="4">ಆದರೂ ಈಗ ಯೆಹೋವ ದೇವರು ಹೀಗೆ ಹೇಳಿದರು: ‘ಜೆರುಬ್ಬಾಬೆಲನೇ, ಬಲವಾಗಿರು. ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನೇ, ಬಲವಾಗಿರು. ದೇಶದ ಜನರೆಲ್ಲರೇ, ಬಲವಾಗಿರಿ,’ ಕೆಲಸಮಾಡಿರಿ. ‘ನಾನು ನಿಮ್ಮ ಸಂಗಡ ಇದ್ದೇನೆ’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.</verse>
				<verse number="5">ನೀವು ಈಜಿಪ್ಟಿನೊಳಗಿನಿಂದ ಹೊರಗೆ ಬಂದಾಗ, ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ, ನನ್ನ ಆತ್ಮವು ನಿಮ್ಮಲ್ಲಿ ನೆಲೆಗೊಂಡಿರುವುದು. ನೀವು ಭಯಪಡಬೇಡಿರಿ.</verse>
				<verse number="6">“ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಸ್ವಲ್ಪ ಕಾಲದ ನಂತರ ಇನ್ನೊಂದು ಸಾರಿ ನಾನು ಆಕಾಶಗಳನ್ನು ಭೂಮಿಯನ್ನು, ಸಮುದ್ರವನ್ನು ಮತ್ತು ಒಣನೆಲವನ್ನು ಕದಲಿಸುತ್ತೇನೆ.</verse>
				<verse number="7">ಎಲ್ಲಾ ಜನಾಂಗಗಳನ್ನು ನಡುಗಿಸುವೆನು. ಎಲ್ಲಾ ಜನಾಂಗಗಳ ಇಷ್ಟ ವಸ್ತುಗಳು ಬಂದು ಒದಗಲು, ಈ ಆಲಯವನ್ನು ಮಹಿಮೆಯಿಂದ ತುಂಬಿಸುತ್ತೇನೆ’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.</verse>
				<verse number="8">‘ಬೆಳ್ಳಿ ನನ್ನದು, ಚಿನ್ನವು ನನ್ನದು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.</verse>
				<verse number="9">‘ಈಗಿರುವ ಆಲಯದ ಮಹಿಮೆಯು, ಹಿಂದಿನ ಆಲಯದ ಮಹಿಮೆಗಿಂತ ವಿಶೇಷವಾಗಿರುವುದು,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ‘ನಾನೇ ಈ ಸ್ಥಳದಲ್ಲಿ ಸಮಾಧಾನ ಕೊಡುವೆನು,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.”</verse>
				<verse number="10">ದಾರ್ಯಾವೆಷನ ಎರಡನೆಯ ವರ್ಷದ, ಒಂಬತ್ತನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿನದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನಿಗೆ ಬಂದಿತು:</verse>
				<verse number="11">“ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ‘ಮೋಶೆಯ ನಿಯಮದ ಪ್ರಕಾರವಾಗಿ ಯಾಜಕರಿಗೆ,</verse>
				<verse number="12">ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಪ್ರತಿಷ್ಠಿಸಿದ ಮಾಂಸವನ್ನು ಹೊತ್ತು, ತನ್ನ ಸೆರಗಿನಿಂದ ರೊಟ್ಟಿಯನ್ನಾದರೂ ಬೇಯಿಸಿದ್ದನ್ನಾದರೂ ದ್ರಾಕ್ಷಾರಸವನ್ನಾದರೂ ಎಣ್ಣೆಯನ್ನಾದರೂ ಯಾವ ವಿಧವಾದ ಆಹಾರವನ್ನಾದರೂ ಮುಟ್ಟಿದರೆ, ಅದು ಪರಿಶುದ್ಧವಾಗುವುದೋ? ಕೇಳು,’ ” ಎಂದನು. ಹಗ್ಗಾಯನು ಹಾಗೆ ವಿಚಾರಿಸಲು, ಯಾಜಕರು, “ಇಲ್ಲ,” ಎಂದು ಉತ್ತರಕೊಟ್ಟರು.</verse>
				<verse number="13">ಆಗ ಹಗ್ಗಾಯನು, “ಹೆಣದಿಂದ ಅಶುದ್ಧವಾದವನು, ಇವುಗಳಲ್ಲಿ ಯಾವುದನ್ನಾದರೂ ಮುಟ್ಟಿದರೆ, ಅಶುದ್ಧವಾಗುವುದೋ?” ಎಂದನು. ಯಾಜಕರು ಉತ್ತರವಾಗಿ, “ಹೌದು, ಅಶುದ್ಧವಾಗುವುದು,” ಎಂದರು.</verse>
				<verse number="14">ಆಗ ಹಗ್ಗಾಯನು ಮುಂದುವರಿಸಿ ಹೇಳಿದ್ದೇನೆಂದರೆ, “ಈ ಜನರೂ, ಈ ಜನಾಂಗವೂ ನನ್ನ ಮುಂದೆ ಹೀಗೆಯೇ ಇದ್ದಾರೆ ಎಂದು ಯೆಹೋವ ದೇವರು ಹೇಳುತ್ತಾರೆ. ಅವರು ಅರ್ಪಿಸುವಂಥಾದ್ದು ಅಶುದ್ಧವೇ.</verse>
				<verse number="15">“ಈಗ ಚೆನ್ನಾಗಿ ಯೋಚಿಸಿಕೊಳ್ಳಿರಿ. ಯೆಹೋವ ದೇವರ ಆಲಯ ನಿವೇಶನದಲ್ಲಿ, ಕಲ್ಲಿನ ಮೇಲೆ ಕಲ್ಲು ಇಡುವ, ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿರಿ.</verse>
				<verse number="16">ಆ ದಿನಗಳು ಇದ್ದದ್ದು ಮೊದಲುಗೊಂಡು, ಒಬ್ಬನು ಇಪ್ಪತ್ತು ಸೇರಿನ ರಾಶಿಗೆ ಬಂದಾಗ, ಹತ್ತು ಸೇರು ಮಾತ್ರ ಸಿಕ್ಕುತ್ತಿತ್ತು. ಒಬ್ಬನು ಐವತ್ತು ಪಾತ್ರೆ ದ್ರಾಕ್ಷಾರಸವನ್ನು ತುಂಬಿಸುವುದಕ್ಕೆ ತೊಟ್ಟಿಗೆ ಬಂದಾಗ, ಇಪ್ಪತ್ತು ಮಾತ್ರ ದೊರೆಯುತ್ತಿತ್ತಷ್ಟೆ.</verse>
				<verse number="17">ನಾನು ನಿಮ್ಮ ಕೈ ದುಡಿತಗಳನ್ನೆಲ್ಲಾ ಬೂಜಿನಿಂದಲೂ ಉರಿಗಾಳಿಯಿಂದಲೂ ಕಲ್ಮಳೆಯಿಂದಲೂ ಹಾಳುಮಾಡಿದೆನು. ಆದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="18">ಚೆನ್ನಾಗಿ ನೆನಪಿಗೆ ತಂದುಕೊಳ್ಳಿರಿ. ಇಂದಿನಿಂದ ಇದಕ್ಕೆ ಮುಂಚೆ ಒಂಬತ್ತನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ, ಯೆಹೋವ ದೇವರ ಮಂದಿರದ ಅಸ್ತಿವಾರವು ಹಾಕಲಾದ ದಿನದಿಂದ ಸೂಕ್ಷ್ಮವಾಗಿ ಯೋಚಿಸಿಕೊಳ್ಳಿರಿ.</verse>
				<verse number="19">ಬೀಜವು ಇನ್ನು ಕಣಜದಲ್ಲಿ ಉಂಟೋ? ದ್ರಾಕ್ಷಿ, ಅಂಜೂರ, ದಾಳಿಂಬೆ, ಎಣ್ಣೆಮರಗಳು ಇನ್ನೂ ಫಲಿಸಲಿಲ್ಲವಲ್ಲಾ. “ಈ ದಿನ ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು,” ಎಂದರು.</verse>
				<verse number="20">ಎರಡನೆಯ ಸಾರಿ ಯೆಹೋವ ದೇವರ ವಾಕ್ಯವು, ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿವಸದಲ್ಲಿ, ಹಗ್ಗಾಯನಿಗೆ ಬಂದಿತು.</verse>
				<verse number="21">ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನೆಂದರೆ, “ನಾನು ಆಕಾಶಗಳನ್ನೂ, ಭೂಮಿಯನ್ನೂ ಕದಲಿಸುವೆನು.</verse>
				<verse number="22">ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು. ನಾನು ಇತರ ಜನಾಂಗಗಳ, ರಾಜ್ಯಗಳ ಬಲವನ್ನು ನಾಶಮಾಡುವೆನು. ರಥಗಳನ್ನೂ, ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು. ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಖಡ್ಗದಿಂದ ಬೀಳುವನು.</verse>
				<verse number="23">“ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಶೆಯಲ್ತಿಯೇಲನ ಮಗನಾದ ನನ್ನ ಸೇವಕ ಜೆರುಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದುಕೊಂಡು ನಿನ್ನನ್ನು ಮುದ್ರೆಯ ಉಂಗುರದ ಹಾಗೆ ಇಡುವೆನು. ಏಕೆಂದರೆ ನಿನ್ನನ್ನು ನಾನೇ ಆಯ್ದುಕೊಂಡಿದ್ದೇನೆ,’ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.”</verse>
			</chapter>
		</book>
		<book number="38">
			<chapter number="1">
				<verse number="1">ಪರ್ಷಿಯಾದ ಅರಸ ದಾರ್ಯಾವೆಷನ ಎರಡನೆಯ ವರ್ಷ, ಎಂಟನೆಯ ತಿಂಗಳಿನಲ್ಲಿ ಯೆಹೋವ ದೇವರ ವಾಕ್ಯವು ಇದ್ದೋನನ ಮೊಮ್ಮಗನೂ, ಬೆರಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಬಂದಿತು:</verse>
				<verse number="2">“ಯೆಹೋವ ದೇವರು ನಿಮ್ಮ ಪಿತೃಗಳ ಮೇಲೆ ಬಹು ಕೋಪಗೊಂಡಿದ್ದಾರೆ.</verse>
				<verse number="3">ಆದ್ದರಿಂದ ನೀನು ಅವರಿಗೆ ಹೇಳತಕ್ಕದ್ದೇನೆಂದರೆ, ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ಬಳಿಗೆ ತಿರುಗಿಕೊಳ್ಳಿರಿ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಆಗ, ‘ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.</verse>
				<verse number="4">ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ, ನಿಮ್ಮ ಕೆಟ್ಟ ಮಾರ್ಗಗಳನ್ನೂ, ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸರ್ವಶಕ್ತರಾದ ಯೆಹೋವ ದೇವರು ಪ್ರಕಟಿಸುತ್ತಾರೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ. ನನ್ನಲ್ಲಿ ಲಕ್ಷ್ಯವಿಡಲಿಲ್ಲ ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="5">ನಿಮ್ಮ ಪಿತೃಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?</verse>
				<verse number="6">ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿ, ನನ್ನ ವಾಕ್ಯಗಳೂ, ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿಲ್ಲವೋ? “ಆಗ ಅವರು ತಿರುಗಿಕೊಂಡು, ‘ಸೇನಾಧೀಶ್ವರ ಯೆಹೋವ ದೇವರು ನಮಗೆ ಮಾಡುವುದಕ್ಕೆ ಯೋಚಿಸಿದ ಹಾಗೆಯೇ, ನಮ್ಮ ಮಾರ್ಗಗಳ ಪ್ರಕಾರವಾಗಿಯೂ, ನಮ್ಮ ಕ್ರಿಯೆಗಳ ಪ್ರಕಾರವಾಗಿಯೂ ನಮಗೆ ಮಾಡಿದ್ದಾರೆ,’ ಎಂದು ಹೇಳಿದರು.”</verse>
				<verse number="7">ದಾರ್ಯಾವೆಷನ ಎರಡನೆಯ ವರ್ಷದಲ್ಲಿ, ಹನ್ನೊಂದನೆಯ ತಿಂಗಳಾದ ಶೇಬಾಟ್ ಎಂಬ ತಿಂಗಳಿನ ಇಪ್ಪತ್ತನಾಲ್ಕನೆಯ ದಿವಸದಲ್ಲಿ ಯೆಹೋವ ದೇವರ ವಾಕ್ಯವು ಇದ್ದೋನನ ಮೊಮ್ಮಗನೂ, ಬೆರಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಬಂದಿತು:</verse>
				<verse number="8">ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬನು, ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು ಬಣ್ಣದ ಹಾಗು ಬಿಳಿಯ ಕುದುರೆಗಳು ಇದ್ದವು.</verse>
				<verse number="9">ಆಗ ನಾನು, “ನನ್ನ ಒಡೆಯನೇ, ಇವೇನು?” ಎಂದೆನು. ಆಗ ನನ್ನ ಸಂಗಡ ಮಾತನಾಡಿದ ದೇವದೂತನು, “ಇವೇನೆಂದು ನಿನಗೆ ತೋರಿಸುತ್ತೇನೆ,” ಎಂದನು.</verse>
				<verse number="10">ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು, “ಇವರು ಭೂಮಿಯ ಸುತ್ತಲೂ ನಡೆದಾಡುವುದಕ್ಕೆ ಯೆಹೋವ ದೇವರಿಂದ ಕಳುಹಿಸಲಾದವರು,” ಎಂದನು.</verse>
				<verse number="11">ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಯೆಹೋವ ದೇವರ ದೂತನಿಗೆ, “ಭೂಮಿಯ ಸುತ್ತಲೂ ನಡೆದಾಡಿದ್ದೇವೆ. ಇಗೋ, ಭೂಮಿಯೆಲ್ಲಾ ನಿಶ್ಚಿಂತೆಯಿಂದ ಶಾಂತವಾಗಿದೆ,” ಎಂದನು.</verse>
				<verse number="12">ಆಗ ಯೆಹೋವ ದೇವರ ದೂತನು ಉತ್ತರಕೊಟ್ಟು: “ಸರ್ವಶಕ್ತರಾದ ಯೆಹೋವ ದೇವರೇ, ನೀವು ಯೆರೂಸಲೇಮನ್ನೂ, ಯೆಹೂದದ ಪಟ್ಟಣಗಳನ್ನೂ ಎಷ್ಟರವರೆಗೆ ಕನಿಕರಿಸದೆ ಇರುವಿರಿ? ಅವುಗಳ ಮೇಲೆ ಈ ಎಪ್ಪತ್ತು ವರ್ಷಗಳು ಸಿಟ್ಟು ಮಾಡಿದ್ದೀರಲ್ಲವೋ?” ಎಂದನು.</verse>
				<verse number="13">ಆಗ ಯೆಹೋವ ದೇವರು ನನ್ನ ಸಂಗಡ ಮಾತನಾಡಿದ ದೂತನಿಗೆ ಒಳ್ಳೆಯ ಮಾತುಗಳಿಂದಲೂ, ಆದರಣೆಯ ಮಾತುಗಳಿಂದಲೂ ಉತ್ತರಕೊಟ್ಟರು.</verse>
				<verse number="14">ನನ್ನ ಸಂಗಡ ಮಾತನಾಡಿದ ದೂತನು ನನಗೆ, “ಇದನ್ನು ಸಾರಿ ಹೇಳು: ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯೆರೂಸಲೇಮಿಗಾಗಿಯೂ, ಚೀಯೋನಿಗಾಗಿಯೂ ಮಹಾ ರೋಷವುಳ್ಳವನಾಗಿದ್ದೇನೆ.</verse>
				<verse number="15">ನಿಶ್ಚಿಂತೆಯುಳ್ಳವರಾಗಿರುವ ಇತರ ರಾಷ್ಟ್ರಗಳ ಮೇಲೆ ನಾನು ಬಹಳ ಕೋಪವಾಗಿದ್ದೇನೆ. ಆದರೆ ಯೆರೂಸಲೇಮಿನ ಮೇಲೆ ನಾನು ಸ್ವಲ್ಪ ಮಾತ್ರ ಸಿಟ್ಟುಗೊಂಡಿರಲು, ಅವರು ಸಂಕಟಕ್ಕೆ ಇನ್ನು ಹೆಚ್ಚು ಕೇಡು ಕೂಡಿಸಿದರು.</verse>
				<verse number="16">“ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾನೆ: ‘ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ. ನನ್ನ ಆಲಯವು ಅದರಲ್ಲಿ ಕಟ್ಟಲಾಗುವುದು. ಯೆರೂಸಲೇಮಿನ ಮೇಲೆ ಅಳತೆಯ ನೂಲು ಚಾಚಲಾಗುವುದು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.</verse>
				<verse number="17">“ಪುನಃ ನೀನು ಸಾರಿ, ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವುವು. ಯೆಹೋವ ದೇವರು ಚೀಯೋನನ್ನು ಆದರಿಸುವರು. ಯೆರೂಸಲೇಮನ್ನು ಆರಿಸಿಕೊಳ್ಳುವರು, ಎಂದು ಹೇಳಿದನು.”</verse>
				<verse number="18">ನಾನು ನನ್ನ ಕಣ್ಣುಗಳನ್ನು ಎತ್ತಿದಾಗ, ನಾಲ್ಕು ಕೊಂಬುಗಳನ್ನು ನೋಡಿದೆನು.</verse>
				<verse number="19">ಆಗ ನನ್ನ ಸಂಗಡ ಮಾತನಾಡಿದ ದೂತನಿಗೆ ನಾನು, “ಇದೇನು?” ಎಂದೆನು. ಅದಕ್ಕೆ ಅವನು ನನಗೆ ಉತ್ತರಕೊಟ್ಟು, “ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನೂ ಚದರಿಸಿದ ಕೊಂಬುಗಳು,” ಎಂದನು.</verse>
				<verse number="20">ಆಗ ಯೆಹೋವ ದೇವರು ನನಗೆ ನಾಲ್ಕು ಕಮ್ಮಾರರನ್ನು ತೋರಿಸಿದರು.</verse>
				<verse number="21">ನಾನು, “ಇವರು ಏನು ಮಾಡುವುದಕ್ಕೆ ಬರುತ್ತಾರೆ?” ಎಂದೆನು. ಅದಕ್ಕೆ ಅವರು, “ಯೆಹೂದ್ಯರಲ್ಲಿ ಯಾರೂ ತಲೆಯೆತ್ತದಂತೆ ಅವುಗಳನ್ನು ಚದರಿಸುವ ಕೊಂಬುಗಳು ಅವು. ಆದರೆ ಇವರು ಯೆಹೂದ ದೇಶವನ್ನು ಚದರಿಸಬೇಕೆಂದು ತಲೆಯೆತ್ತಿದ ರಾಷ್ಟ್ರಗಳನ್ನೇ ಚದರಿಸಿ, ಅದರ ಕೊಂಬುಗಳನ್ನು ಕೆಡವಿ ಹಾಕುವುದಕ್ಕೆ ಬಂದಿದ್ದಾರೆ,” ಎಂದು ಹೇಳಿದರು.</verse>
			</chapter>
			<chapter number="2">
				<verse number="1">ಆಗ ನಾನು ಕಣ್ಣೆತ್ತಿ ನೋಡಲು, ತನ್ನ ಕೈಯಲ್ಲಿ ಅಳೆಯುವ ನೂಲು ಉಳ್ಳ ಒಬ್ಬ ಮನುಷ್ಯನನ್ನು ಕಂಡೆನು.</verse>
				<verse number="2">ಆಗ ನಾನು, “ನೀನು ಎಲ್ಲಿಗೆ ಹೋಗುತ್ತೀ?” ಎಂದೆನು. ಅದಕ್ಕೆ ಆತನು ನನಗೆ, “ಯೆರೂಸಲೇಮನ್ನು ಅಳತೆಮಾಡಿ, ಅದರ ಅಗಲವೆಷ್ಟು? ಅದರ ಉದ್ದವೆಷ್ಟು? ಎಂದು ನೋಡುವುದಕ್ಕೆ ಹೋಗುತ್ತೇನೆ,” ಎಂದನು.</verse>
				<verse number="3">ನನ್ನ ಸಂಗಡ ಮಾತನಾಡಿದ ದೂತನು ಬರುತ್ತಿರಲು, ಇನ್ನೊಬ್ಬ ದೂತನು ಅವನನ್ನು ಎದುರುಗೊಂಡು,</verse>
				<verse number="4">“ಓಡಿಹೋಗಿ ಈ ಯೌವನಸ್ಥನಿಗೆ, ‘ಯೆರೂಸಲೇಮು, ಅದರಲ್ಲಿರುವ ಮನುಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾಗಿರುವುದು. ಯೆರೂಸಲೇಮು ಗೋಡೆ ಇಲ್ಲದ ಊರುಗಳಂತೆ ಇರುವುದು.</verse>
				<verse number="5">ನಾನೇ ಅದರ ಸುತ್ತಲೂ ಬೆಂಕಿಯ ಗೋಡೆಯಾಗಿಯೂ, ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನು ಎಂದು ಹೇಳು,’ ಎಂದನು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="6">“ಎಲೈ, ನೀವು ಹೊರಗೆ ಬಂದು ಉತ್ತರ ದೇಶದಿಂದ ಓಡಿಹೋಗಿರಿ. ಏಕೆಂದರೆ ಆಕಾಶದ ನಾಲ್ಕು ದಿಕ್ಕುಗಳಿಗೆ ನಿಮ್ಮನ್ನು ಚದರಿಸಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="7">“ಚೀಯೋನೇ, ಬನ್ನಿರಿ, ಬಾಬಿಲೋನಿನ ಪುತ್ರಿಯ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ.”</verse>
				<verse number="8">ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, “ನಿಮ್ಮನ್ನು ಸುಲಿದುಕೊಂಡ ಜನಾಂಗಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ. ಏಕೆಂದರೆ ನಿಮ್ಮನ್ನು ಮುಟ್ಟುವವನು ಯೆಹೋವ ದೇವರ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.</verse>
				<verse number="9">ನಾನು ನನ್ನ ಕೈಯನ್ನು ಅವರ ಮೇಲೆ ಎತ್ತುವೆನು. ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ಕಳುಹಿಸಿದರೆಂದು ನೀವು ತಿಳಿಯುವಿರಿ.</verse>
				<verse number="10">“ಚೀಯೋನ್ ಪುತ್ರಿಯೇ, ಹಾಡಿ ಹರ್ಷಿಸು. ಏಕೆಂದರೆ, ನಾನು ಬರುವೆನು ಮತ್ತು ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="11">“ಆ ದಿವಸದಲ್ಲಿ ಅನೇಕ ಜನಾಂಗಗಳು ಯೆಹೋವ ದೇವರನ್ನು ಅಂಟಿಕೊಂಡು ನನ್ನ ಜನರಾಗುವರು, ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆಂದು ತಿಳಿದುಕೊಳ್ಳುವೆ.</verse>
				<verse number="12">ಇದಲ್ಲದೆ ಯೆಹೋವ ದೇವರು ತಮ್ಮ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸೊತ್ತಾಗಿ ಹೊಂದುವರು. ಯೆರೂಸಲೇಮನ್ನು ತಿರುಗಿ ಆಯ್ದುಕೊಳ್ಳುವರು.</verse>
				<verse number="13">ಎಲ್ಲಾ ಮನುಷ್ಯರೇ, ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಅವರು ತಮ್ಮ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾರೆ.”</verse>
			</chapter>
			<chapter number="3">
				<verse number="1">ಆತನು ನನಗೆ, ಯೆಹೋವ ದೇವರ ದೂತನ ಮುಂದೆ ನಿಂತಿರುವ ಮಹಾಯಾಜಕನಾದ ಯೆಹೋಶುವನನ್ನೂ, ಅವನ ಮೇಲೆ ದೂರು ಹೇಳುವುದಕ್ಕೆ ಅವನ ಬಲಗಡೆಯಲ್ಲಿ ನಿಂತ ಸೈತಾನನನ್ನೂ ತೋರಿಸಿದನು.</verse>
				<verse number="2">ಆಗ ಯೆಹೋವ ದೇವರ ದೂತನು ಸೈತಾನನಿಗೆ, “ಸೈತಾನನೇ, ಯೆಹೋವ ದೇವರು ನಿನ್ನನ್ನು ಖಂಡಿಸಲಿ. ಯೆರೂಸಲೇಮನ್ನು ಆಯ್ದುಕೊಂಡ ಯೆಹೋವ ದೇವರು ನಿನ್ನನ್ನು ಖಂಡಿಸಲಿ. ಅದು ಬೆಂಕಿಯೊಳಗಿಂದ ಎಳೆದ ಕೊಳ್ಳಿಯಾಗಿದೆಯಲ್ಲವೋ?” ಎಂದನು.</verse>
				<verse number="3">ಯೆಹೋಶುವನು ಮೈಲಿಗೆಯಾದ ವಸ್ತ್ರಗಳನ್ನು ತೊಟ್ಟುಕೊಂಡವನಾಗಿ ದೇವದೂತನ ಮುಂದೆ ನಿಂತನು.</verse>
				<verse number="4">ಆಗ ದೇವದೂತನು ತನ್ನ ಮುಂದೆ ನಿಂತವರಿಗೆ, “ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದುಹಾಕಿರಿ,” ಎಂದನು. ಅನಂತರ ಯೆಹೋಶುವನಿಗೆ, “ನಿನ್ನ ಪಾಪವನ್ನು ತೆಗೆದುಹಾಕಿದ್ದೇನೆ. ಬದಲಾಗಿ ಶ್ರೇಷ್ಠ ವಸ್ತ್ರಗಳನ್ನು ನಿನಗೆ ತೊಡಿಸುವೆನು,” ಎಂದನು.</verse>
				<verse number="5">ಆಗ ನಾನು, “ಅವನ ತಲೆಯ ಮೇಲೆ ಶುದ್ಧ ಮುಂಡಾಸನ್ನು ಇಡಿರಿ,” ಎಂದೆನು. ಆಗ ಸೇವಕರು ಯೆಹೋಶುವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಟ್ಟು, ಅವನಿಗೆ ವಸ್ತ್ರಗಳನ್ನು ಧರಿಸಿದರು. ಯೆಹೋವ ದೇವರ ದೂತನು ಪಕ್ಕದಲ್ಲಿ ನಿಂತಿದ್ದನು.</verse>
				<verse number="6">ಆಗ ಯೆಹೋವ ದೇವರ ದೂತನು ಯೆಹೋಶುವನಿಗೆ ಸಾಕ್ಷಿ ಕೊಟ್ಟಿದ್ದೇನೆಂದರೆ,</verse>
				<verse number="7">“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಗಳನ್ನು ಕೈಗೊಂಡರೆ, ಆಗ ನೀನು ನನ್ನ ಆಲಯಕ್ಕೂ ನ್ಯಾಯತೀರಿಸಿ, ನನ್ನ ಅಂಗಳಗಳನ್ನೂ ಕಾಯುವೆ. ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ಹಕ್ಕನ್ನು ನಿನಗೆ ಕೊಡುವೆನು.’</verse>
				<verse number="8">“ಮಹಾಯಾಜಕನಾದ ಯೆಹೋಶುವನೇ, ನೀನೂ, ನಿನ್ನ ಮುಂದೆ ಕುಳಿತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ. ಅವರು ಆಶ್ಚರ್ಯವನ್ನುಂಟುಮಾಡುವ ಮನುಷ್ಯರಾಗಿದ್ದಾರೆ. ನಾನು ‘ರೆಂಬೆ’ ಎಂಬ ನನ್ನ ಸೇವಕನನ್ನು ಬರಮಾಡುವೆನು ಎಂಬುದಕ್ಕೆ ಇವರೇ ಮುಂಗುರುತು.</verse>
				<verse number="9">ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಆ ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವಂತೆ ನಾನು ಅದರ ಮೇಲೆ ಒಂದು ಶಾಸನವನ್ನು ಕೆತ್ತಿಸುವೆನು. ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಆ ದೇಶದ ಅಪರಾಧವನ್ನು ಒಂದೇ ದಿವಸದಲ್ಲಿ ತೊಲಗಿಸುವೆನು.</verse>
				<verse number="10">“ ‘ಆ ದಿವಸದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷಿಬಳ್ಳಿಯ ಕೆಳಗೂ, ಅಂಜೂರದ ಮರದ ಕೆಳಗೂ ಕರೆಯುವಿರಿ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.”</verse>
			</chapter>
			<chapter number="4">
				<verse number="1">ಆಗ ನನ್ನ ಸಂಗಡ ಮಾತನಾಡಿದ ದೇವದೂತನು ತಿರುಗಿಬಂದು,</verse>
				<verse number="2">ನಿದ್ರೆ ಹತ್ತಿದವನಂತಿದ್ದ ನನ್ನನ್ನು ಎಬ್ಬಿಸಿದನು. ಅವನು ನನಗೆ, “ನೀನು ಏನು ನೋಡುತ್ತೀ?” ಎಂದು ಕೇಳಿದಾಗ ನಾನು, “ಏಳು ದೀಪಗಳುಳ್ಳ ಬಂಗಾರದ ದೀಪಸ್ತಂಭ ಒಂದನ್ನು ನೋಡುತ್ತಿದ್ದೇನೆ. ಅದರ ಮೇಲೆ ಎಣ್ಣೆಯ ಪಾತ್ರೆಗಳಿವೆ.</verse>
				<verse number="3">ಅದರ ತಲೆಯ ಮೇಲಿರುವ ಏಳು ದೀಪಗಳಿಗೆ ಏಳು ಕೊಳವೆಗಳಿವೆ. ಅದರ ಬಳಿಯಲ್ಲಿ ಎರಡು ಹಿಪ್ಪೆಮರಗಳು, ಪಾತ್ರೆಯ ಬಲಗಡೆಯಲ್ಲಿ ಒಂದೂ, ಪಾತ್ರೆಯ ಎಡಗಡೆಯಲ್ಲಿ ಒಂದೂ ಇದ್ದವು,” ಎಂದನು.</verse>
				<verse number="4">ಹೀಗೆ ನಾನು ಉತ್ತರಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ, “ನನ್ನ ಒಡೆಯನೇ, ಇವೇನು?” ಎಂದೆನು.</verse>
				<verse number="5">ಆಗ ನನ್ನ ಸಂಗಡ ಮಾತನಾಡಿದ ದೂತನು ಉತ್ತರಕೊಟ್ಟು ನನಗೆ, “ಇವೇನೆಂದು ಗೊತ್ತಿಲ್ಲವೋ?” ಎಂದು ಕೇಳಿದನು. ನಾನು, “ಇಲ್ಲ, ನನ್ನ ಒಡೆಯನೇ,” ಎಂದೆನು.</verse>
				<verse number="6">ಆಗ ಅವನು, “ಜೆರುಬ್ಬಾಬೆಲನಿಗೆ ಯೆಹೋವ ದೇವರ ವಾಕ್ಯವು ಇದೇ: ‘ಪರಾಕ್ರಮದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.</verse>
				<verse number="7">“ಪರಾಕ್ರಮದ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬಯಲಾಗುವೆ. ಅವನು ಕಲಶದ ಕಲ್ಲನ್ನು ಸ್ಥಾಪಿಸಿ, ‘ದೇವರು ಇದನ್ನು ಆಶೀರ್ವದಿಸಲಿ! ದೇವರು ಇದನ್ನು ಆಶೀರ್ವದಿಸಲಿ!’ ಎಂದು ಘೋಷಿಸುವನು.”</verse>
				<verse number="8">ಇದಲ್ಲದೆ ಯೆಹೋವ ದೇವರ ವಾಕ್ಯವು ನನಗೆ ಬಂದಿತು,</verse>
				<verse number="9">“ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳೇ ಅದನ್ನು ಪೂರೈಸುವುವು. ಆಗ ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆಂದು ತಿಳಿಯುವಿರಿ.</verse>
				<verse number="10">“ಆ ಏಳು ದೀಪಗಳು ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಯೆಹೋವ ದೇವರ ಕಣ್ಣುಗಳು. ಜನರು ನೂಲುಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುವರು. ಹೀಗಿರುವುದರಿಂದ ಅಲ್ಪ ಕಾರ್ಯಗಳ ದಿನವನ್ನು ತಿರಸ್ಕರಿಸಿದವರು ಯಾರು?”</verse>
				<verse number="11">ಆಗ ನಾನು ದೇವದೂತನಿಗೆ, “ದೀಪಸ್ತಂಭದ ಎಡಬಲಗಳಲ್ಲಿರುವ ಈ ಎರಡು ಓಲಿವ್ ಮರಗಳು ಏನು?” ಎಂದೆನು.</verse>
				<verse number="12">ಪುನಃ ನಾನು ಅವನಿಗೆ, “ಎರಡು ಚಿನ್ನದ ನಾಳಗಳಿಂದ ಚಿನ್ನದ ಎಣ್ಣೆಯನ್ನು ತಮ್ಮೊಳಗಿಂದ ಸುರಿಸುವ, ಈ ಎರಡು ಹಿಪ್ಪೆಕೊಂಬೆಗಳು ಏನು?” ಎಂದೆನು.</verse>
				<verse number="13">ಅವನು ನನಗೆ, “ಇವು ಏನೆಂದು ತಿಳಿಯುವುದಿಲ್ಲವೋ?” ಎಂದನು. ನಾನು, “ನನ್ನ ಒಡೆಯನೇ, ಇಲ್ಲ,” ಎಂದೆನು.</verse>
				<verse number="14">ಆಗ ಅವನು, “ಇವು ಸಮಸ್ತ ಭೂಮಿಯ ಕರ್ತ ಆಗಿರುವವರ ಸನ್ನಿಧಿಸೇವೆ ಮಾಡಲು ಅಭಿಷೇಕ ಹೊಂದಿರುವ ಇಬ್ಬರು ಸೇವಕರನ್ನು ಸೂಚಿಸುತ್ತದೆ,” ಎಂದನು.</verse>
			</chapter>
			<chapter number="5">
				<verse number="1">ಆಗ ನಾನು ತಿರುಗಿಕೊಂಡು ನನ್ನ ಕಣ್ಣುಗಳನ್ನೆತ್ತಿ ನೋಡಲು, ಹಾರುವ ಸುರುಳಿ ಕಾಣಿಸಿತು.</verse>
				<verse number="2">ಆಗ ದೂತನು ನನಗೆ, “ಏನು ನೋಡುತ್ತೀ?” ಎಂದಾಗ, ನಾನು, “ಹಾರುವ ಸುರುಳಿಯನ್ನು ನೋಡುತ್ತಿದ್ದೇನೆ. ಅದರ ಉದ್ದವು ಒಂಬತ್ತು ಮೀಟರ್, ಅದರ ಅಗಲವು ನಾಲ್ಕುವರೆ ಮೀಟರ್ ಇದೆ,” ಎಂದೆನು.</verse>
				<verse number="3">ಆಗ ದೂತನು ನನಗೆ, “ಭೂಮಿಯ ಮೇಲೆಲ್ಲಾ ಹರಡುವ ಶಾಪವು ಇದೇ. ಈ ದಿಕ್ಕಿನಲ್ಲಿ ಬರೆದಿರುವ ಪ್ರಕಾರ ಕಳ್ಳತನ ಮಾಡುವವರೆಲ್ಲರನ್ನು ತೆಗೆದುಹಾಕಲಾಗುವುದು. ಸುಳ್ಳಾಣೆ ಇಡುವವರೆಲ್ಲರನ್ನು ಆ ಕಡೆಯಲ್ಲಿ ಬರೆದಿರುವ ಪ್ರಕಾರ ತೆಗೆದುಹಾಕಲಾಗುವುದು.</verse>
				<verse number="4">‘ನಾನು ಶಾಪವನ್ನು ಕಳುಹಿಸುತ್ತೇನೆ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಅದು ಕಳ್ಳನ ಮನೆಯಲ್ಲಿಯೂ, ನನ್ನ ಹೆಸರಿನಿಂದ ಸುಳ್ಳಾಗಿ ಆಣೆ ಇಡುವವನ ಮನೆಯಲ್ಲಿಯೂ ಪ್ರವೇಶಿಸಿ, ಅವನ ಮನೆಯಲ್ಲಿ ನಿಂತು, ಅದನ್ನೂ, ಅದರ ಮರಗಳನ್ನೂ, ಅದರ ಕಲ್ಲುಗಳನ್ನೂ ನಾಶಮಾಡುವುದು.’ ”</verse>
				<verse number="5">ಆಗ ನನ್ನ ಸಂಗಡ ಮಾತನಾಡುತ್ತಿದ್ದ ದೂತನು ಬಂದು, “ನಿನ್ನ ಕಣ್ಣೆತ್ತಿ ಹೊರಡುವಂಥದ್ದು ಏನೆಂದು ನೋಡು,” ಎಂದು ನನಗೆ ಹೇಳಿದನು.</verse>
				<verse number="6">ನಾನು, “ಇದೇನು?” ಎಂದು ಕೇಳಿದಾಗ, ಅವನು, “ಇದು ಅಳೆಯುವ ಬುಟ್ಟಿ,” ಎಂದನು. ಇದಲ್ಲದೆ ಅವನು, “ಇದೇ ಸಮಸ್ತ ಭೂಮಿಯಲ್ಲಿಯ ಜನರ ಅಧರ್ಮವು,” ಎಂದನು.</verse>
				<verse number="7">ಸೀಸದ ಮುಚ್ಚಳವು ತೆಗೆಯಲಾಯಿತು. ಆ ಬುಟ್ಟಿಯಲ್ಲಿ ಒಬ್ಬ ಸ್ತ್ರೀ ಕುಳಿತುಕೊಂಡಿದ್ದಳು.</verse>
				<verse number="8">ಆತನು, “ಇದು ದುಷ್ಟತ್ವವು,” ಎಂದು ಹೇಳಿ ಆಕೆಯನ್ನು ಬುಟ್ಟಿಯಲ್ಲಿ ಪುನಃ ಅದುಮಿ, ಆ ಬುಟ್ಟಿಯ ಮುಚ್ಚಳವನ್ನು ಮುಚ್ಚಿದನು.</verse>
				<verse number="9">ಆಗ ನಾನು ಕಣ್ಣೆತ್ತಿ ನೋಡಿದಾಗ, ಇಬ್ಬರು ಸ್ತ್ರೀಯರು ಇದ್ದರು. ಅವರ ರೆಕ್ಕೆಗಳು ರಭಸವಾಗಿದ್ದವು. ಅವರ ರೆಕ್ಕೆಗಳು ಕೊಕ್ಕರೆಯ ರೆಕ್ಕೆಗಳ ಹಾಗಿದ್ದವು. ಅವರು ಆಕಾಶ ಮತ್ತು ಭೂಮಿಯ ನಡುವೆ ಬುಟ್ಟಿಯನ್ನು ಎತ್ತಿದರು.</verse>
				<verse number="10">ಆಗ ನಾನು ನನ್ನ ಸಂಗಡ ಮಾತನಾಡಿದ ದೂತನಿಗೆ, “ಇವರು ಅಳತೆಯ ಬುಟ್ಟಿಯನ್ನು ಎಲ್ಲಿಗೆ ಹೊತ್ತುಕೊಂಡು ಹೋಗುತ್ತಾರೆ?” ಎಂದೆನು.</verse>
				<verse number="11">ದೂತನು ನನಗೆ, “ಶಿನಾರ್ ದೇಶದಲ್ಲಿ ಅದಕ್ಕೆ ಮನೆ ಕಟ್ಟುವುದಕ್ಕೆ ತೆಗೆದುಕೊಂಡು ಹೋಗುತ್ತಾರೆ. ಅಲ್ಲಿ ಅದು ಸ್ಥಾಪಿತವಾಗಿ, ತನ್ನ ಸ್ಥಾನದಲ್ಲಿ ಇರಿಸಲಾಗುವುದು,” ಎಂದನು.</verse>
			</chapter>
			<chapter number="6">
				<verse number="1">ನಾನು ಕಣ್ಣೆತ್ತಿ ನೋಡಿದಾಗ, ನಾಲ್ಕು ರಥಗಳು ಎರಡು ಬೆಟ್ಟಗಳ ಮಧ್ಯದಿಂದ ಹೊರಟು ಬಂದವು. ಆ ಬೆಟ್ಟಗಳು ಕಂಚಿನ ಬೆಟ್ಟಗಳಾಗಿದ್ದವು.</verse>
				<verse number="2">ಮೊದಲನೆಯ ರಥಕ್ಕೆ ಕೆಂಪು ಕುದುರೆಗಳಿದ್ದವು, ಎರಡನೆಯ ರಥಕ್ಕೆ ಕಪ್ಪು ಕುದುರೆಗಳು,</verse>
				<verse number="3">ಮೂರನೆಯ ರಥಕ್ಕೆ ಬಿಳಿ ಕುದುರೆಗಳು, ನಾಲ್ಕನೆಯ ರಥಕ್ಕೆ ಮಚ್ಚೆ ಮಚ್ಚೆಯ ಕುದುರೆಗಳಿದ್ದವು. ಇವೆಲ್ಲವೂ ಬಲವಾದ ಕುದುರೆಗಳು.</verse>
				<verse number="4">ಆಗ ನನ್ನ ಸಂಗಡ ಮಾತನಾಡಿದ ದೂತನಿಗೆ, “ನನ್ನ ಒಡೆಯನೇ, ಇದೇನು?” ಎಂದೆನು.</verse>
				<verse number="5">ದೂತನು ನನಗೆ, “ಇವು ಸ್ವರ್ಗದ ನಾಲ್ಕು ಆತ್ಮಗಳು. ಇವು ಇಡೀ ಜಗತ್ತಿನ ಕಡೆಗೆ ಯೆಹೋವ ದೇವರ ಮುಂದೆ ನಿಂತಲ್ಲಿಂದ ಹೊರಟಿವೆ.</verse>
				<verse number="6">ಕಪ್ಪು ಕುದುರೆಗಳ ರಥ, ಉತ್ತರ ದೇಶಕ್ಕೆ ಹೊರಟಿತು. ಬಿಳಿ ಕುದುರೆಗಳು ಪಶ್ಚಿಮಕ್ಕೆ ಹಿಂದೆ ಹೋಯಿತು. ಮಚ್ಚೆ ಮಚ್ಚೆಯ ಕುದುರೆಯ ರಥ ದಕ್ಷಿಣಕ್ಕೆ ಹೊರಟಿತು.”</verse>
				<verse number="7">ಕೆಂಪು ಕುದುರೆಗಳ ರಥ ಹೊರಟು ಲೋಕದಲ್ಲಿ ಸಂಚಾರ ಮಾಡಲು ಹೋಗುವುದಕ್ಕೆ ನೋಡಿದವು. ಆಗ ಅವನು, “ಹೋಗಿ ಲೋಕದಲ್ಲಿ ಅತ್ತಿತ್ತ ನಡೆದಾಡುವುದಕ್ಕೆ ಇಲ್ಲಿಂದ ಹೋಗಿರಿ,” ಎಂದನು. ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು.</verse>
				<verse number="8">ಆಗ ದೂತನು ನನಗೆ ಕೂಗಿ, “ನೋಡು, ಉತ್ತರ ದೇಶಕ್ಕೆ ಹೊರಟವುಗಳು, ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿ ಪಡಿಸಿವೆ,” ಎಂದನು.</verse>
				<verse number="9">ಯೆಹೋವ ದೇವರ ವಾಕ್ಯವು ನನಗೆ ಬಂದಿತು:</verse>
				<verse number="10">“ಆ ಸೆರೆಯವರಿಂದ, ಅಂದರೆ ಬಾಬಿಲೋನಿನಿಂದ ಬಂದಿರುವ ಹೆಲ್ದಾಯನಿಂದಲೂ, ತೋಬೀಯನಿಂದಲೂ, ಯೆದಾಯನಿಂದಲೂ ಬೆಳ್ಳಿಬಂಗಾರವನ್ನು ತೆಗೆದುಕೊಂಡು, ಅದೇ ದಿವಸದಲ್ಲಿ ನೀನು ಜೆಫನ್ಯನ ಮಗ ಯೋಷೀಯನ ಮನೆಗೆ ಹೋಗು.</verse>
				<verse number="11">ಅಲ್ಲಿ ಬೆಳ್ಳಿ, ಬಂಗಾರವನ್ನು ತೆಗೆದುಕೊಂಡು, ಕಿರೀಟಗಳನ್ನು ಮಾಡಿ, ಅವುಗಳನ್ನು ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನ ತಲೆಯ ಮೇಲೆ ಇಟ್ಟು,</verse>
				<verse number="12">ಅವನಿಗೆ ಹೇಳತಕ್ಕದ್ದೇನೆಂದರೆ: ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ರೆಂಬೆ,’ ಎಂದು ಹೆಸರುಳ್ಳ ಮನುಷ್ಯನು, ತನ್ನ ಸ್ಥಳದೊಳಗಿಂದ ರೆಂಬೆಯನ್ನು ತೆಗೆದುಹಾಕಿ, ಯೆಹೋವ ದೇವರ ಆಲಯವನ್ನು ಕಟ್ಟುವನು.</verse>
				<verse number="13">ಅವನೇ ಯೆಹೋವ ದೇವರ ದೇವಾಲಯವನ್ನು ಕಟ್ಟಿದ ಮೇಲೆ, ರಾಜವೈಭವವನ್ನು ಧರಿಸಿ ಸಿಂಹಾಸನದ ಮೇಲೆ ಆಸೀನನಾಗಿ ಆಳುವನು. ಅವನ ಸಿಂಹಾಸನದಲ್ಲಿ ಒಬ್ಬ ಯಾಜಕನಾಗಿರುವನು. ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವುದು.</verse>
				<verse number="14">ಆ ಕಿರೀಟಗಳು ಹೇಲೆಮ್, ತೋಬೀಯ, ಯೆದಾಯ ಮತ್ತು ಜೆಫನ್ಯನ ಮಗ ಹೇನ್ ಇವರ ಜ್ಞಾಪಕಾರ್ಥವಾಗಿ ಯೆಹೋವ ದೇವರ ಆಲಯದಲ್ಲಿ ಇರುವುವು.</verse>
				<verse number="15">ದೂರದಲ್ಲಿರುವವರು ಬಂದು ಯೆಹೋವ ದೇವರ ಆಲಯವನ್ನು ಕಟ್ಟುವುದಕ್ಕೆ ಸಹಾಯ ಮಾಡುವರು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆಂದು ನೀವು ತಿಳಿಯುವಿರಿ. ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಜಾಗ್ರತೆಯಾಗಿ ಕಿವಿಗೊಟ್ಟರೆ, ಇದು ನೆರವೇರುವುದು.”</verse>
			</chapter>
			<chapter number="7">
				<verse number="1">ಅರಸನಾದ ದಾರ್ಯಾವೆಷನ ನಾಲ್ಕನೆಯ ವರ್ಷದಲ್ಲಿ ಒಂಬತ್ತನೆಯ ತಿಂಗಳಿನ ಅಂದರೆ ಕಿಸ್ಲೇವ್ ತಿಂಗಳಿನ ನಾಲ್ಕನೆಯ ದಿವಸದಲ್ಲಿ ಯೆಹೋವ ದೇವರ ವಾಕ್ಯವು ಜೆಕರ್ಯನಿಗೆ ಬಂದಿತು.</verse>
				<verse number="2">ಅಷ್ಟರಲ್ಲಿ ಬೇತೇಲಿನ ಜನರು ಸರೆಚರನನ್ನೂ, ರೆಗೆಮ್ ಮೆಲೆಕನನ್ನೂ, ಅವರ ಮನುಷ್ಯರನ್ನೂ ಯೆಹೋವ ದೇವರ ಪ್ರಸನ್ನತೆಯನ್ನು ಕೋರಲು ದೇವಾಲಯಕ್ಕೆ ಕಳುಹಿಸಿದರು.</verse>
				<verse number="3">ಆಗ ಸರ್ವಶಕ್ತರಾದ ಯೆಹೋವ ದೇವರ ಆಲಯದಲ್ಲಿದ್ದ ಯಾಜಕರ ಸಂಗಡ ಮತ್ತು ಪ್ರವಾದಿಗಳ ಸಂಗಡ ನಾನು ಮಾತನಾಡಿ, “ಇಷ್ಟು ವರ್ಷ ಮಾಡಿದ ಪ್ರಕಾರ, ಐದನೆಯ ತಿಂಗಳಿನಲ್ಲಿ ಉಪವಾಸವಿದ್ದು, ಪ್ರಲಾಪಿಸಬೇಕೋ?” ಎಂದು ವಿಚಾರಿಸಿಕೊಂಡು ಬರಬೇಕೆಂದು ಅವರಿಗೆ ಆಜ್ಞಾಪಿಸಿದರು.</verse>
				<verse number="4">ಆಗ ಸರ್ವಶಕ್ತರಾದ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ,</verse>
				<verse number="5">“ದೇಶದ ಜನರೆಲ್ಲರಿಗೂ, ಯಾಜಕರಿಗೂ ಹೀಗೆ ಹೇಳು: ‘ನೀವು ಈ ಎಪ್ಪತ್ತು ವರ್ಷಗಳು ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸ ಮಾಡಿ, ದುಃಖಿಸುತ್ತಿದ್ದಾಗ, ಆ ನಿಮ್ಮ ಉಪವಾಸವು ನಿಜವಾಗಿಯೂ ನನಗಾಗಿ ಮಾಡಿದ್ದೀರೋ?</verse>
				<verse number="6">ನೀವು ಉಂಡು ಕುಡಿಯುತ್ತಿದ್ದಾಗ, ನಿಮಗಾಗಿಯೇ ಉಂಡು ಕುಡಿದಿರಲ್ಲಾ?</verse>
				<verse number="7">ಯೆರೂಸಲೇಮು, ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳವುಗಳಾಗಿಯೂ, ಸುಖವಾಗಿಯೂ, ಸಮೃದ್ಧಿಯಾಗಿಯೂ ದಕ್ಷಿಣವೂ, ಪಶ್ಚಿಮ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ, ಯೆಹೋವ ದೇವರು ಪೂರ್ವದ ಪ್ರವಾದಿಗಳ ಮೂಲಕ ಸಾರಿದ ಮಾತುಗಳು ಅವು ಅಲ್ಲವೋ?’ ಎಂಬುದು.”</verse>
				<verse number="8">ಯೆಹೋವ ದೇವರ ವಾಕ್ಯವು ಜೆಕರ್ಯನಿಗೆ ಪುನಃ ಬಂದು ಹೇಳಿದ್ದೇನೆಂದರೆ,</verse>
				<verse number="9">“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಪ್ರೀತಿಯನ್ನೂ, ಕನಿಕರವನ್ನೂ ತೋರಿಸಿರಿ;</verse>
				<verse number="10">ವಿಧವೆಗೂ, ದಿಕ್ಕಿಲ್ಲದವನಿಗೂ, ಅನ್ಯನಿಗೂ, ಬಡವನಿಗೂ ಹಿಂಸಾಚಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ,’ ” ಎಂಬುದು.</verse>
				<verse number="11">“ಆದರೆ ಅವರು ಕೇಳುವುದಕ್ಕೆ ನಿರಾಕರಿಸಿದರು. ಅವರು ಬೆನ್ನನ್ನು ತಿರುಗಿಸಿ, ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದ ಮಾಡಿಕೊಂಡರು.</verse>
				<verse number="12">ಅವರು ನಿಯಮವನ್ನೂ, ಸರ್ವಶಕ್ತದರಾದ ಯೆಹೋವ ದೇವರು ತಮ್ಮ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯಗಳನ್ನೂ ಕೇಳದ ಹಾಗೆ, ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಕಠಿಣಮಾಡಿಕೊಂಡರು. ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರ ಮಹಾಕೋಪಕ್ಕೆ ಗುರಿಯಾದರು.</verse>
				<verse number="13">“ಆಗ, ‘ನಾನು ಕೂಗಲು, ಅವರು ಕೇಳದೆ ಇದ್ದ ಪ್ರಕಾರ, ಅವರು ಕೂಗಲು ನಾನು ಕೇಳದೆ ಇದ್ದೇನೆಂದು,’ ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.</verse>
				<verse number="14">ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರಗಾಳಿಯಿಂದ ಚದರಿಸಿ ಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು. ಹಾದು ಹೋಗುವವನೂ, ತಿರುಗಿಕೊಳ್ಳುವವನೂ ಇಲ್ಲದೆ ಹೋಯಿತು. ಏಕೆಂದರೆ ರಮ್ಯವಾದ ದೇಶವನ್ನು ಹಾಳುಮಾಡಿದರು.”</verse>
			</chapter>
			<chapter number="8">
				<verse number="1">ಯೆಹೋವ ದೇವರ ವಾಕ್ಯವು ನನಗೆ ಪುನಃ ಉಂಟಾಗಿ ಹೇಳಿದ್ದೇನೆಂದರೆ,</verse>
				<verse number="2">ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ಚೀಯೋನಿನ ವಿಷಯವಾಗಿ ಅತಿ ರೋಷಗೊಂಡಿದ್ದೇನೆ. ಅತಿ ಉಗ್ರದಿಂದ ಅವಳ ವಿಷಯದಲ್ಲಿ ರೋಷವುಳ್ಳವನಾಗಿದ್ದೇನೆ.”</verse>
				<verse number="3">ಯೆಹೋವ ದೇವರು ಹೀಗೆ ಹೇಳುತ್ತಾರೆ: “ಚೀಯೋನಿಗೆ ನಾನು ತಿರುಗಿಕೊಂಡು, ನಾನು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವೆನು. ಆಗ ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೇನಾಧೀಶ್ವರ ಯೆಹೋವ ದೇವರ ಪರ್ವತವು ಪರಿಶುದ್ಧ ಪರ್ವತವೆಂದೂ ಕರೆಯಿಸಿಕೊಳ್ಳುವುದು.”</verse>
				<verse number="4">ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ವೃದ್ಧರೂ, ಮುದುಕಿಯರೂ ವಾಸವಾಗಿರುವರು. ವೃದ್ದಾಪ್ಯದಿಂದ ಒಬ್ಬೊಬ್ಬರ ಕೈಯಲ್ಲಿ ಅವರವರ ಕೋಲು ಇರುವುದು.</verse>
				<verse number="5">ಪಟ್ಟಣದ ಬೀದಿಗಳು ಆಡುವ ಬಾಲಕ ಬಾಲಕಿಯರಿಂದ ತುಂಬಿರುವುದು.”</verse>
				<verse number="6">ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇದು ಈ ದಿವಸಗಳಲ್ಲಿ ಉಳಿದ ಈ ಜನರ ದೃಷ್ಟಿಗೆ ಆಶ್ಚರ್ಯವಾಗಿ ತೋರಿದರೂ, ನನ್ನ ಕಣ್ಣುಗಳಿಗೆ ಸಹ ಆಶ್ಚರ್ಯವಾಗಿ ತೋರುವುದೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.</verse>
				<verse number="7">ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾನು ನನ್ನ ಜನರನ್ನು ಪೂರ್ವದಿಕ್ಕಿನ ದೇಶದಿಂದಲೂ, ಪಶ್ಚಿಮ ದೇಶದಿಂದಲೂ ರಕ್ಷಿಸುವೆನು.</verse>
				<verse number="8">ನಾನು ಅವರನ್ನು ತರುವೆನು. ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು. ಅವರು ನನ್ನ ಜನರಾಗಿರುವರು. ನಾನು ಅವರಿಗೆ ನಂಬಿಗಸ್ತನೂ, ನೀತಿವಂತನೂ ಆದ ದೇವರಾಗಿರುವೆನು.”</verse>
				<verse number="9">ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ದೇವಾಲಯವನ್ನು ಕಟ್ಟುವ ಹಾಗೆ ಸೇನಾಧೀಶ್ವರ ಯೆಹೋವ ದೇವರ ಆಲಯದ ಅಸ್ತಿವಾರವು ಹಾಕಲಾದ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ಈ ವಾಕ್ಯಗಳನ್ನು ಈ ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.</verse>
				<verse number="10">ಏಕೆಂದರೆ ಈ ದಿವಸಗಳಿಗಿಂತ ಮುಂಚೆ ಮನುಷ್ಯನಿಗೆ ಕೂಲಿ ಇರಲಿಲ್ಲ, ಪಶುಗಳಿಗೆ ದುಡಿತವಿರಲಿಲ್ಲ; ಇಲ್ಲವೆ ಹೋಗುವವನಿಗೂ, ಬರುವವನಿಗೂ ಇಕ್ಕಟ್ಟಿನ ದೆಸೆಯಿಂದ ಸಮಾಧಾನವಿರಲಿಲ್ಲ. ನಾನು ಪ್ರತಿಯೊಬ್ಬನನ್ನು ಅವರ ನೆರೆಯವನಿಗೆ ವಿರೋಧವಾಗಿ ಇಟ್ಟಿದ್ದೇನೆ.</verse>
				<verse number="11">ಆದರೆ ಈಗ ಉಳಿದ ಈ ಜನರಿಗೆ ನಾನು ಪೂರ್ವದ ದಿವಸಗಳಲ್ಲಿದ್ದ ಹಾಗೆ ಇರುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.</verse>
				<verse number="12">ಬೀಜವು ವೃದ್ಧಿಯಾಗುವುದು. ದ್ರಾಕ್ಷಿಬಳ್ಳಿ ತನ್ನ ಫಲವನ್ನು ಕೊಡುವುದು. ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವುದು. ಆಕಾಶಗಳು ತಮ್ಮ ಮಂಜನ್ನು ಕೊಡುವುವು. ಈ ಜನರಲ್ಲಿ ಉಳಿದವರು, ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳುವಂತೆ ಮಾಡುವೆನು.</verse>
				<verse number="13">ಯೆಹೂದದ ಮನೆತನದವರೇ, ಇಸ್ರಾಯೇಲಿನ ಮನೆತನದವರೇ ನೀವು ಜನಾಂಗಗಳಲ್ಲಿ ಶಾಪವಾಗಿದ್ದ ಪ್ರಕಾರ, ನಾನು ನಿಮ್ಮನ್ನು ರಕ್ಷಿಸುವೆನು ಮತ್ತು ನೀವು ಆಶೀರ್ವಾದವಾಗಿರುವಿರಿ, ಭಯಪಡಬೇಡಿರಿ, ನಿಮ್ಮ ಕೈಗಳು ಬಲವಾಗಿರಲಿ.</verse>
				<verse number="14">ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಪಿತೃಗಳು ನನಗೆ ಸಿಟ್ಟು ಎಬ್ಬಿಸಿದಾಗ ನಾನು ನಿಮ್ಮನ್ನು ಕರುಣಿಸದೆ, ವಿನಾಶವನ್ನು ಬರಮಾಡಲು ಯೋಚಿಸಿದೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.</verse>
				<verse number="15">“ಆದರೆ ಈಗ ನಾನು ತಿರುಗಿ ಈ ದಿವಸಗಳಲ್ಲಿ ಪುನಃ ಯೆರೂಸಲೇಮಿಗೂ, ಯೆಹೂದದ ಮನೆತನದವರಿಗೂ ಒಳ್ಳೆಯದನ್ನು ಮಾಡಲು ಯೋಚಿಸಿದ್ದೇನೆ. ನೀವು ಭಯಪಡಬೇಡಿರಿ.</verse>
				<verse number="16">ನೀವು ಮಾಡತಕ್ಕ ಕಾರ್ಯಗಳು ಇವೇ: ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಮಾತನಾಡಲಿ. ನಿಮ್ಮ ನ್ಯಾಯಾಲಯಗಳಲ್ಲಿ ಸತ್ಯವೂ ನ್ಯಾಯವೂ ಶಾಂತಿಯ ಸಾಧನವಾಗಿರಲಿ.</verse>
				<verse number="17">ನಿಮ್ಮ ಹೃದಯಗಳಲ್ಲಿ ನೆರೆಯವನ ವಿರುದ್ಧವಾಗಿ ಕೇಡನ್ನು ಕಲ್ಪಿಸದಿರಿ. ಸುಳ್ಳು ಪ್ರಮಾಣವನ್ನು ಪ್ರೀತಿಸಬೇಡಿರಿ. ಏಕೆಂದರೆ ಇವುಗಳನ್ನೆಲ್ಲಾ ನಾನು ಹಗೆಮಾಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="18">ಯೆಹೋವ ದೇವರ ವಾಕ್ಯವು ಪುನಃ ನನಗೆ ಬಂದು ಹೇಳಿದ್ದೇನೆಂದರೆ,</verse>
				<verse number="19">ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಾಲ್ಕನೆಯ, ಐದನೆಯ, ಏಳನೆಯ, ಹತ್ತನೆಯ ತಿಂಗಳಿನ ಉಪವಾಸವು ಯೆಹೂದದ ಮನೆತನದವರಿಗೆ ಸಂತೋಷಕರ, ಸಂಭ್ರಮ ಕಾಲವೂ, ಆನಂದಕರವಾದ ಹಬ್ಬಗಳೂ ಆಗುವುವು. ಆದರೆ ಸತ್ಯವನ್ನೂ, ಸಮಾಧಾನವನ್ನೂ ಪ್ರೀತಿಸಿರಿ.”</verse>
				<verse number="20">ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಅನೇಕ ಜನರೂ, ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನೂ ಬರುವರು.</verse>
				<verse number="21">ಒಂದು ಪಟ್ಟಣದ ನಿವಾಸಿಗಳು ಮತ್ತೊಂದಕ್ಕೆ ಹೋಗಿ, ‘ನಾವು ಯೆಹೋವ ದೇವರ ಮುಂದೆ ಬೇಡಿಕೊಳ್ಳುವುದಕ್ಕೂ, ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕುವುದಕ್ಕೂ ಬೇಗ ಹೋಗೋಣ. ನಾನು ಕೂಡ ಹೋಗುತ್ತೇನೆ,’ ಎಂದು ಹೇಳುವರು.</verse>
				<verse number="22">ಅನೇಕ ಜನರೂ, ಬಲವಾದ ಜನಾಂಗಗಳೂ ಯೆರೂಸಲೇಮಿಗೆ ಸೇನಾಧೀಶ್ವರ ಯೆಹೋವ ದೇವರನ್ನು ಹುಡುಕುವುದಕ್ಕೂ, ಯೆಹೋವ ದೇವರ ಮುಂದೆ ಬೇಡಿಕೊಳ್ಳುವುದಕ್ಕೂ ಬರುವುವು.”</verse>
				<verse number="23">ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಆ ದಿವಸಗಳಲ್ಲಿ ಜನಾಂಗಗಳ ಸಮಸ್ತ ಭಾಷೆಯವರೊಳಗಿಂದ ಹತ್ತು ಮನುಷ್ಯರು ಯೆಹೂದ್ಯನಾಗಿರುವವನ ಸೆರಗನ್ನು ಹಿಡಿದು, ನಾವು ನಿಮ್ಮ ಸಂಗಡ ಬರುತ್ತೇವೆ, ಏಕೆಂದರೆ ನಿಮ್ಮ ಸಂಗಡ ದೇವರು ಇದ್ದಾರೆಂದು ಕೇಳಿದ್ದೇವೆ,” ಎಂದು ಹೇಳುವರು.</verse>
			</chapter>
			<chapter number="9">
				<verse number="1">ಒಂದು ಪ್ರವಾದನೆ: ಹದ್ರಾಕ್ ದೇಶದ ವಿಷಯವಾದ ಯೆಹೋವ ದೇವರ ವಾಕ್ಯ: ಅದು ದಮಸ್ಕದಲ್ಲಿ ತಂಗುವುದು. ಮನುಷ್ಯನ ಕಣ್ಣುಗಳು, ಇಸ್ರಾಯೇಲಿನ ಎಲ್ಲಾ ಗೋತ್ರಗಳು ಯೆಹೋವ ದೇವರ ಮೇಲೆ ಇರುವುವು.</verse>
				<verse number="2">ಹಮಾತು, ಬಹಳ ಜ್ಞಾನವಿರುವ ಟೈರ್, ಸೀದೋನ್ ಸಹ ಅದರ ಮೇರೆಯಾಗಿದೆ.</verse>
				<verse number="3">ಟೈರ್ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು, ಬೆಳ್ಳಿಯನ್ನು ಧೂಳಿನಂತೆಯೂ, ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು.</verse>
				<verse number="4">ಯೆಹೋವ ದೇವರು ಅದರ ಆಸ್ತಿಪಾಸ್ತಿಯನ್ನು ಕಿತ್ತುಹಾಕುವರು. ಅದೆಲ್ಲವನ್ನು ಸಮುದ್ರದಲ್ಲಿ ಎಸೆದುಬಿಡುವರು. ಅದು ಬೆಂಕಿಯಿಂದ ದಹಿಸಿಬಿಡುವುದು.</verse>
				<verse number="5">ಅಷ್ಕೆಲೋನು ಕಂಡು ಭಯಪಡುವುದು, ಗಾಜವು ಸಹ ಅದನ್ನು ಕಂಡು ವೇದನೆ ಪಡುವುದು. ಎಕ್ರೋನಿಗೂ ಸಹ ಹೀಗೆ ಆಗುವುದು. ಏಕೆಂದರೆ ಅವಳ ನಿರೀಕ್ಷೆಯು ಬಾಡುವುದು. ಗಾಜದೊಳಗಿಂದ ಅರಸನು ನಾಶವಾಗುವನು. ಅಷ್ಕೆಲೋನು ನಿವಾಸ ಇಲ್ಲದೆ ಇರುವುದು.</verse>
				<verse number="6">ಅಷ್ಡೋದಿನಲ್ಲಿ ಮಿಶ್ರಜಾತಿಯವರು ವಾಸಿಸುವರು. ಫಿಲಿಷ್ಟಿಯರ ಗರ್ವವನ್ನು ನಾನು ತೆಗೆದುಬಿಡುವೆನು.</verse>
				<verse number="7">ಅವರ ರಕ್ತವನ್ನು ಅವರ ಬಾಯೊಳಗಿಂದಲೂ, ಅವರು ಕಚ್ಚುವ ಅಸಹ್ಯ ಪದಾರ್ಥಗಳನ್ನು ನಾನು ತೆಗೆದುಹಾಕಿಬಿಡುವೆನು. ಅವರು ಸಹ ನಮ್ಮ ದೇವರಿಗಾಗಿ ಉಳಿಯುವರು. ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವರು. ಎಕ್ರೋನು ಯೆಬೂಸಿಯನ ಹಾಗೆ ಇರುವರು.</verse>
				<verse number="8">ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ, ಸೈನ್ಯದ ನಿಮಿತ್ತವೂ ನನ್ನ ಆಲಯದ ಹತ್ತಿರ ಪಾಳೆಯ ಮಾಡುತ್ತೇನೆ. ಇನ್ನು ಮೇಲೆ ಉಪದ್ರವ ಕೊಡುವವನು, ಅವರ ಮೇಲೆ ಹಾದು ಹೋಗುವುದಿಲ್ಲ. ಏಕೆಂದರೆ ಈಗ ನನ್ನ ಕಣ್ಣುಗಳಿಂದ ನೋಡುತ್ತಿದ್ದೇನೆ.</verse>
				<verse number="9">ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.</verse>
				<verse number="10">ಎಫ್ರಾಯೀಮಿನೊಳಗಿಂದ ರಥಗಳನ್ನೂ ಯೆರೂಸಲೇಮಿನೊಳಗಿಂದ ಯುದ್ಧದ ಕುದುರೆಗಳನ್ನೂ ತೆಗೆದುಬಿಡುವೆನು. ಯುದ್ಧದ ಬಿಲ್ಲು ಸಹ ಮುರಿದು ಹಾಕಲಾಗುವುದು. ಇತರ ರಾಷ್ಟ್ರಗಳಿಗೆ ಸಮಾಧಾನಕರವಾಗಿರುವುದು. ಆತನ ದೊರೆತನವು ಸಮುದ್ರದಿಂದ ಸಮುದ್ರಕ್ಕೂ, ನದಿಯಿಂದ ಭೂಮಿಯ ಅಂತ್ಯಗಳವರೆಗೂ ಇರುವುದು.</verse>
				<verse number="11">ನೀನು ನನ್ನೊಡನೆ ಒಡಂಬಡಿಕೆಯನ್ನು ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ನಿನ್ನ ಸೆರೆಯವರನ್ನು ನೀರಿಲ್ಲದ ಬಾವಿಯೊಳಗಿಂದ ಬಿಡುಗಡೆಮಾಡುವೆನು.</verse>
				<verse number="12">ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರುಗಿರಿ. ಎರಡರಷ್ಟು ಕೊಡುವೆನೆಂದು ನಿನಗೆ ಈ ಹೊತ್ತೇ ಪ್ರಕಟಿಸುತ್ತೇನೆ.</verse>
				<verse number="13">ನಾನು ನನ್ನ ಬಿಲ್ಲನ್ನು ಬಗ್ಗಿಸುವಂತೆ ಯೆಹೂದವನ್ನು ಬಗ್ಗಿಸುತ್ತೇನೆ. ಎಫ್ರಾಯೀಮಿನಿಂದ ಅದನ್ನು ತುಂಬಿಸುತ್ತೇನೆ. ಚೀಯೋನೇ, ನಿನ್ನ ಪುತ್ರರನ್ನು ಗ್ರೀಕ್ ಪುತ್ರರ ವಿರೋಧವಾಗಿ ಎಬ್ಬಿಸಿ, ನಿನ್ನನ್ನು ಶೂರನ ಖಡ್ಗದಂತೆ ಮಾಡಿದ್ದೇನೆ.</verse>
				<verse number="14">ಇದಲ್ಲದೆ ಯೆಹೋವ ದೇವರು ಅವರ ಮೇಲೆ ಕಾಣಿಸಿಕೊಳ್ಳುವರು. ಆತನ ಬಾಣಗಳು ಮಿಂಚಿನ ಹಾಗೆ ಹೊರಡುವುವು. ಸಾರ್ವಭೌಮ ಯೆಹೋವ ದೇವರು ತುತೂರಿಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗುವರು.</verse>
				<verse number="15">ಸೇನಾಧೀಶ್ವರ ಯೆಹೋವ ದೇವರು ಅವರನ್ನು ಕಾಪಾಡುವರು. ಅವರು ನಾಶಮಾಡಿ, ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿಕೊಳ್ಳುವರು. ಕುಡಿದು, ದ್ರಾಕ್ಷಾರಸದಿಂದಾದ ಹಾಗೆ ತೂಗಾಡುವರು. ಅವರು ಬಲಿಪೀಠದ ಮೂಲೆಗಳಿಗೆ ಚಿಮುಕಿಸಲು ಬಳಸುವ ಪಾತ್ರೆಯ ಹಾಗೆಯೂ ತುಂಬಿರುವರು.</verse>
				<verse number="16">ಅವರ ದೇವರಾದ ಯೆಹೋವ ದೇವರು ಆ ದಿವಸದಲ್ಲಿ, ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು, ಅವರು ಕಿರೀಟದ ರತ್ನಗಳಂತೆ ಆತನ ದೇಶದಲ್ಲಿ ಹೊಳೆಯುವರು.</verse>
				<verse number="17">ಅವರ ಒಳ್ಳೆಯತನವು ಎಷ್ಟೋ ದೊಡ್ಡದು. ಅವರು ಸೌಂದರ್ಯವು ಎಷ್ಟು ಮಹತ್ತಾದದ್ದು! ಧಾನ್ಯವು ಯೌವನಸ್ಥರನ್ನೂ, ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವುವು.</verse>
			</chapter>
			<chapter number="10">
				<verse number="1">ಯೆಹೋವ ದೇವರಿಂದ ಹಿಂಗಾರು ಮಳೆಯ ಕಾಲದಲ್ಲಿ, ಮಳೆಯನ್ನು ಬೇಡಿಕೊಳ್ಳಿರಿ. ಹೀಗೆ ಯೆಹೋವ ದೇವರು ಮಿಂಚುವ ಮೋಡಗಳನ್ನು ಮಾಡಿ, ಅವರಿಗೆ ಸಮೃದ್ಧಿಯಾದ ಮಳೆಯನ್ನೂ, ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವರು.</verse>
				<verse number="2">ವಿಗ್ರಹಗಳು ವ್ಯರ್ಥವಾಗಿ ಮಾತನಾಡುವವು. ಶಕುನಗಾರರು ಸುಳ್ಳು ದರ್ಶನವನ್ನು ಕಾಣುವರು. ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ. ವ್ಯರ್ಥವಾಗಿ ಆದರಿಸುತ್ತಾರೆ, ಆದ್ದರಿಂದ ಕುರಿಗಳಂತೆ ಚದರಿದ್ದಾರೆ, ಕುರುಬನಿಲ್ಲದೆ ಕಂಗೆಟ್ಟಿದ್ದಾರೆ.</verse>
				<verse number="3">“ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯುತ್ತಿದೆ. ನಾಯಕರನ್ನು ದಂಡಿಸುವೆನು. ಏಕೆಂದರೆ ಸೇನಾಧೀಶ್ವರ ಯೆಹೋವ ದೇವರು ತಮ್ಮ ಮಂದೆಯಾಗಿರುವ ಯೆಹೂದನ ಮನೆತನದವರನ್ನು ಪರಿಪಾಲಿಸಿ, ಅವರನ್ನು ಯುದ್ಧದಲ್ಲಿ ತಮ್ಮ ಘನವಾದ ಕುದುರೆಯ ಹಾಗೆ ಮಾಡಿದ್ದಾರೆ.</verse>
				<verse number="4">ಆ ಕುಲದಿಂದಲೇ ಮೂಲೆಗಲ್ಲೂ, ಗುಡಾರದ ಮೊಳೆಯೂ, ಯುದ್ಧದ ಬಿಲ್ಲೂ, ಸಕಲ ಅಧಿಕಾರಿಗಳೂ ಕೂಡಿಕೊಂಡು ಹೊರಬರುವರು.</verse>
				<verse number="5">ಅವರು ಯುದ್ಧದಲ್ಲಿ ಶತ್ರುವನ್ನು ಕೆಸರಿನ ಬೀದಿಗಳಲ್ಲಿ ತುಳಿಯುವ ಶೂರರ ಹಾಗಿರುವರು. ಯೆಹೋವ ದೇವರು ಅವರ ಸಂಗಡ ಇರುವುದರಿಂದ ಯುದ್ಧಮಾಡುವರು. ಕುದುರೆಗಳ ಮೇಲೆ ಸವಾರಿ ಮಾಡುವ ಶತ್ರುವನ್ನು ನಾಚಿಕೆ ಪಡಿಸುವರು.</verse>
				<verse number="6">“ನಾನು ಯೆಹೂದ ವಂಶವನ್ನು ಬಲಪಡಿಸಿ, ಯೋಸೇಫ ಗೋತ್ರವನ್ನು ರಕ್ಷಿಸುವೆನು. ಅವರನ್ನು ಕನಿಕರಿಸುವುದರಿಂದ ಅವರನ್ನು ತಿರುಗಿ ಬರಮಾಡುವೆನು. ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಇರುವರು. ಏಕೆಂದರೆ ನಾನೇ ಅವರ ದೇವರಾದ ಯೆಹೋವ ದೇವರಾಗಿದ್ದು, ಅವರಿಗೆ ಉತ್ತರಕೊಡುವೆನು.</verse>
				<verse number="7">ಎಫ್ರಾಯೀಮಿನವರು ಶೂರರಂತೆ ಇರುವರು. ಅವರ ಹೃದಯವು ದ್ರಾಕ್ಷಾರಸ ಕುಡಿದವರಂತೆ ಸಂತೋಷಪಡುವುದು. ಅವರ ಮಕ್ಕಳು ಇದನ್ನು ಕಂಡು ಸಂತೋಷಿಸುವರು. ಅವರ ಹೃದಯವು ಯೆಹೋವ ದೇವರಲ್ಲಿ ಆನಂದಿಸುವುದು.</verse>
				<verse number="8">ನಾನು ಅವರಿಗೆ ಸಿಳ್ಳುಹಾಕಿ, ಅವರನ್ನು ಕೂಡಿಸುವೆನು. ನಿಶ್ಚಯವಾಗಿ ಅವರನ್ನು ವಿಮೋಚಿಸಿದ್ದೇನೆ. ಅವರು ಹಿಂದಿನಂತೆ ಮುಂದೆಯೂ ಸಮೃದ್ಧಿಯಾಗಿರುವರು.</verse>
				<verse number="9">ನಾನು ಅವರನ್ನು ಜನಗಳಲ್ಲಿ ಚದುರಿಸಿದರೂ ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.</verse>
				<verse number="10">ಈಜಿಪ್ಟ್ ದೇಶದೊಳಗಿಂದ ಸಹ ಅವರನ್ನು ತಿರುಗಿ ತರುವೆನು. ಅಸ್ಸೀರಿಯದೊಳಗಿಂದ ಅವರನ್ನು ಕೂಡಿಸುವೆನು. ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು. ಅವರಿಗೆ ಸ್ಥಳ ಸಾಲದೆ ಇರುವುದು.</verse>
				<verse number="11">ಅವರು ಕಷ್ಟವೆಂಬ ಕಡಲನ್ನು ದಾಟುವರು. ಸಮುದ್ರದಲ್ಲಿ ತೆರೆಗಳನ್ನು ಬಡಿಯುವರು. ನೈಲ್ ನದಿಯ ಅಗಾಧಗಳೆಲ್ಲಾ ಒಣಗುವುವು. ಅಸ್ಸೀರಿಯದ ಗರ್ವವು ತಗ್ಗಿಹೋಗುವುದು. ಈಜಿಪ್ಟಿನ ರಾಜದಂಡವು ಗತಿಸುವುದು.</verse>
				<verse number="12">ಯೆಹೋವ ದೇವರಲ್ಲಿ ನಾನು ಅವರನ್ನು ಬಲಪಡಿಸುವೆನು. ದೇವರ ಹೆಸರಿನಲ್ಲಿ ಅವರು ಸುರಕ್ಷಿತರಾಗಿ ಬಾಳುವರು,” ಎಂದು ಯೆಹೋವ ದೇವರು ಹೇಳುತ್ತಾರೆ.</verse>
			</chapter>
			<chapter number="11">
				<verse number="1">ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ, ನಿನ್ನ ಬಾಗಿಲುಗಳನ್ನು ತೆರೆ.</verse>
				<verse number="2">ತುರಾಯಿ ಗಿಡವೇ, ಗೋಳಾಡು. ಏಕೆಂದರೆ ದೇವದಾರು ಬಿದ್ದುಹೋಯಿತು. ಭವ್ಯವಾದ ಮರಗಳು ಹಾಳಾದವು. ಬಾಷಾನಿನ ಅಲ್ಲೋನ್ ಮರಗಳೇ, ಗೋಳಾಡಿರಿ. ದಟ್ಟವಾದ ಅಡವಿಯು ಕಡಿಯಲಾಗಿದೆ.</verse>
				<verse number="3">ಕುರುಬರ ಗೋಳಾಟವನ್ನು ಕೇಳಿರಿ, ಅವರ ಸೊಂಪಾದ ಹುಲ್ಲುಗಾವಲುಗಳು ಹಾಳಾಗಿವೆ ಪ್ರಾಯದ ಸಿಂಹಗಳು ಗರ್ಜಿಸುವ ಶಬ್ದ ಕೇಳಿಸುತ್ತಿದೆ, ಯೊರ್ದನಿನ ದಟ್ಟವಾದ ಪೊದೆಗಳು ನಾಶವಾಗಿವೆ.</verse>
				<verse number="4">ನನ್ನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಹತ್ಯೆಗಾಗಿ ಗುರುತಿಸಲಾಗಿರುವ ಮಂದೆಯನ್ನು ಮೇಯಿಸು.</verse>
				<verse number="5">ಅವುಗಳನ್ನು ಕೊಂಡುಕೊಳ್ಳುವವರು, ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ. ಅವುಗಳನ್ನು ಮಾರುವವರು, ‘ನಾನು ಐಶ್ವರ್ಯವಂತನಾದೆನು, ಯೆಹೋವ ದೇವರಿಗೆ ಸ್ತೋತ್ರ,’ ಎಂದೆನ್ನುತ್ತಾರೆ. ಅವರ ಸ್ವಂತ ಕುರುಬರೂ ಅವುಗಳನ್ನು ಕನಿಕರಿಸುವುದಿಲ್ಲ.</verse>
				<verse number="6">ಏಕೆಂದರೆ ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವುದೇ ಇಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆದರೆ ನಾನು ಒಬ್ಬೊಬ್ಬನನ್ನು ಅವನವನ ನೆರೆಯವನ ಕೈಗೂ, ಅವನ ಅರಸನ ಕೈಗೂ ಒಪ್ಪಿಸುವೆನು. ಅವರು ದೇಶವನ್ನು ಧ್ವಂಸಮಾಡುವರು. ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವುದಿಲ್ಲ.”</verse>
				<verse number="7">ಆಗ ಹತ್ಯೆಗಾಗಿ ಗುರುತಿಸಲಾಗಿರುವ ಮಂದೆಯನ್ನು, ವಿಶೇಷವಾಗಿ ಬಡವಾದ ಮಂದೆಯನ್ನು ಮೇಯಿಸಿದೆನು. ನಾನು ಎರಡು ಕೋಲುಗಳನ್ನು ತೆಗೆದುಕೊಂಡೆನು. ಒಂದಕ್ಕೆ “ಕೃಪೆ” ಎಂದೂ ಮತ್ತೊಂದಕ್ಕೆ “ಐಕ್ಯ” ಎಂದು ಹೆಸರಿಟ್ಟೆನು. ಹೀಗೆ ಮಂದೆಯನ್ನು ಮೇಯಿಸಿದೆನು.</verse>
				<verse number="8">ಇದಲ್ಲದೆ, ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು. ಮಂದೆಯು ನನ್ನನ್ನು ಅಸಹ್ಯಪಡಿಸಿತು, ಮತ್ತು ಅವುಗಳಿಂದ ನನಗೆ ಬೇಸರವಾಯಿತು.</verse>
				<verse number="9">ಆಗ ನಾನು, “ನಾನು ನಿಮ್ಮನ್ನು ಮೇಯಿಸುವುದಿಲ್ಲ, ಸಾಯುವಂಥದ್ದು ಸಾಯಲಿ, ಕೆಡುವಂಥದ್ದು ಕೆಡಲಿ, ಮಿಕ್ಕಾದವುಗಳು ಒಂದರ ಮಾಂಸವನ್ನು ಒಂದು ತಿನ್ನಲಿ,” ಎಂದು ಹೇಳಿದೆನು.</verse>
				<verse number="10">ಆಗ “ಕೃಪೆ” ಎಂಬ ನನ್ನ ಕೋಲನ್ನು ತೆಗೆದುಕೊಂಡು ಅದನ್ನು ಮುರಿದುಬಿಟ್ಟೆನು. ಹೀಗೆ ಎಲ್ಲಾ ಜನಾಂಗಗಳ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ರದ್ದುಗೊಳಿಸಿದೆನು.</verse>
				<verse number="11">ಅದೇ ದಿವಸದಲ್ಲಿ ಅದು ರದ್ದುಗೊಂಡಿತು. ಆಗ ನನ್ನನ್ನು ನೋಡಿಕೊಳ್ಳುತ್ತಿದ್ದ ಬಡ ಕುರಿ ಮಂದೆಯು, ಅದು ಯೆಹೋವ ದೇವರ ವಾಕ್ಯವೆಂದು ತಿಳಿದುಕೊಂಡಿತು.</verse>
				<verse number="12">ನಾನು ಅವರಿಗೆ, “ಇದು ನಿಮ್ಮ ಕಣ್ಣುಗಳಲ್ಲಿ ಒಳ್ಳೆಯದಾಗಿ ತೋರಿದರೆ, ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ,” ಎಂದೆನು. ಆಗ ಅವರು ನನಗೆ ಸಂಬಳವಾಗಿ ಮೂವತ್ತು ಬೆಳ್ಳಿ ನಾಣ್ಯಗಳನ್ನು ಕೊಟ್ಟರು.</verse>
				<verse number="13">ಆಗ ಯೆಹೋವ ದೇವರು ನನಗೆ, “ಅದನ್ನು ಕುಂಬಾರನಿಗೆ ಎಸೆ. ಅವರು ನನಗೆ ಕಟ್ಟಿದ ಬೆಲೆ ಸರಿಯಾಗಿದೆ,” ಎಂದನು. ಆಗ ನಾನು, ಆ ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು, ಯೆಹೋವ ದೇವರ ಆಲಯದಲ್ಲಿ ಅವುಗಳನ್ನು ಕುಂಬಾರನಿಗೆ ಎಸೆದೆನು.</verse>
				<verse number="14">ಆಗ ನನ್ನ ಎರಡನೆಯ ಕೋಲಾದ “ಐಕ್ಯ” ಎಂಬುದನ್ನು ಮುರಿದುಬಿಟ್ಟೆನು. ಹೀಗೆ ಯೆಹೂದಕ್ಕೂ, ಇಸ್ರಾಯೇಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು.</verse>
				<verse number="15">ಯೆಹೋವ ದೇವರು ನನಗೆ, “ಇನ್ನು ಬುದ್ಧಿಹೀನವಾದ ಕುರುಬನ ಆಯುಧಗಳನ್ನು ತೆಗೆದುಕೋ.</verse>
				<verse number="16">ಏಕೆಂದರೆ ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು. ಅವನು ಕಳೆದುಹೋದ ಕುರಿಗಳ ಬಗ್ಗೆ ಕಾಳಜಿವಹಿಸುವುದಿಲ್ಲ ಮತ್ತು ಪ್ರಾಯದ ಕುರಿಗಳನ್ನು ಹುಡುಕುವುದಿಲ್ಲ, ಗಾಯಗೊಂಡದ್ದನ್ನು ಅವನು ಗುಣ ಮಾಡುವುದಿಲ್ಲ, ಇನ್ನೂ ಆರೋಗ್ಯದಿಂದಿರುವುದನ್ನು ಅವನು ಪೋಷಿಸುವುದಿಲ್ಲ. ಆದರೆ ಕೊಬ್ಬಿದವುಗಳ ಮಾಂಸವನ್ನು ತಿನ್ನುವನು. ಅವುಗಳ ಗೊರಸುಗಳನ್ನು ಮುರಿದು ಬಿಡುವನು.</verse>
				<verse number="17">“ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಕಷ್ಟ! ಖಡ್ಗವು ಅವನ ತೋಳಿನ ಮೇಲೆಯೂ, ಅವನ ಬಲಗಣ್ಣಿನ ಮೇಲೆಯೂ ಇರುವುದು. ಅವನ ತೋಳು ಪೂರ್ತಿಯಾಗಿ ಒಣಗುವುದು. ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವುದು.”</verse>
			</chapter>
			<chapter number="12">
				<verse number="1">ಒಂದು ಪ್ರವಾದನೆ: ಇಸ್ರಾಯೇಲಿನ ವಿಷಯವಾಗಿ ಯೆಹೋವ ದೇವರ ವಾಕ್ಯ. ಆಕಾಶವನ್ನು ಹರಡಿಸುವಾತರೂ, ಭೂಮಿಯ ಅಸ್ತಿವಾರವನ್ನು ಹಾಕುವಾತರೂ, ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತರೂ ಆದ ಯೆಹೋವ ದೇವರು ಹೇಳುವುದೇನೆಂದರೆ,</verse>
				<verse number="2">“ನಾನು ಯೆರೂಸಲೇಮನ್ನು ಸುತ್ತಲಿರುವ ಎಲ್ಲಾ ಜನರಿಗೆ ಅಮಲೇರಿಸಿ ಓಲಾಡಿಸುವ ಪಾತ್ರೆಯಾಗಿ ಮಾಡುತ್ತೇನೆ. ಯೆರೂಸಲೇಮಿಗೂ, ಯೆಹೂದಕ್ಕೂ ವಿರೋಧವಾಗಿ ಮುತ್ತಿಗೆ ಹಾಕುವಾಗ</verse>
				<verse number="3">ಆ ದಿವಸದಲ್ಲಿ, ಅವಳ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವಾಗ, ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಚಲಿಸಲಾಗದ ಕಲ್ಲಾಗಿ ಮಾಡುತ್ತೇನೆ. ಅದನ್ನು ತೆಗೆದುಹಾಕಲು ಪ್ರಯತ್ನಿಸುವವರೆಲ್ಲರು ತಮ್ಮನ್ನು ತಾವೇ ಗಾಯಗೊಳಿಸಿಕೊಳ್ಳುತ್ತಾರೆ.</verse>
				<verse number="4">ಆ ದಿನದಲ್ಲಿ, ನಾನು ಅವರ ಕುದುರೆಗಳಿಗೆಲ್ಲಾ ತಬ್ಬಿಬ್ಬನ್ನು ಉಂಟುಮಾಡುವೆನು, ಅದರ ರಾಹುತರನ್ನು ಭ್ರಮೆಗೊಳಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಯೆಹೂದ ವಂಶವನ್ನು ಕಟಾಕ್ಷಿಸಿ ಜನಾಂಗಗಳ ಕುದುರೆಗಳನ್ನೆಲ್ಲಾ ಕುರುಡು ಮಾಡುವೆನು.</verse>
				<verse number="5">ಆ ಯೆಹೂದದ ದೊರೆಗಳು ತಮ್ಮ ಹೃದಯದಲ್ಲಿ ಯೆರೂಸಲೇಮಿನ ನಿವಾಸಿಗಳ ಶಕ್ತಿ ಸಾಮರ್ಥ್ಯ, ತಮ್ಮ ಸೇನಾಧೀಶ್ವರ ಯೆಹೋವ ದೇವರಲ್ಲಿಯೇ ಎಂದುಕೊಳ್ಳುವರು.</verse>
				<verse number="6">“ಆ ದಿವಸದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ, ಸಿವುಡುಗಳಲ್ಲಿರುವ ಬೆಂಕಿಯ ಪಂಜಿನ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ, ಎಡಗಡೆಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನೂ ನುಂಗಿಬಿಡುವರು. ಆದರೆ ಯೆರೂಸಲೇಮಿನವರು ತಿರುಗಿ ತನ್ನ ಸ್ಥಳದಲ್ಲಿ ಯೆರೂಸಲೇಮಿನಲ್ಲಿಯೇ ಸುರಕ್ಷಿತವಾಗಿ ವಾಸಿಸುವರು.</verse>
				<verse number="7">“ಇದಲ್ಲದೆ ದಾವೀದನ ಮನೆಯ ಘನತೆಯೂ, ಯೆರೂಸಲೇಮಿನ ನಿವಾಸಿಗಳ ಗೌರವವೂ ಯೆಹೂದಕ್ಕೆ ವಿರೋಧವಾಗಿ ಹೆಚ್ಚಳ ಪಡದ ಹಾಗೆ, ಯೆಹೋವ ದೇವರು ಮೊದಲು ಯೆಹೂದದ ಗುಡಾರಗಳನ್ನು ರಕ್ಷಿಸುವರು.</verse>
				<verse number="8">ಆ ದಿನದಲ್ಲಿ ಯೆಹೋವ ದೇವರು ಯೆರೂಸಲೇಮಿನ ನಿವಾಸಿಗಳನ್ನು ಕಾಪಾಡುವರು. ಆ ದಿವಸಗಳಲ್ಲಿ ಅವರಲ್ಲಿ ಅತ್ಯಂತ ಬಲಹೀನನು ದಾವೀದನಂತೆ ಬಲಾಢ್ಯನಾಗುವನು. ದಾವೀದನ ವಂಶವು ದೇವರ ಹಾಗೆಯೂ, ಮುಂದಾಳಾಗಿ ಯೆಹೋವ ದೇವರ ದೂತನ ಹಾಗೆಯೂ ಇರುವುದು.</verse>
				<verse number="9">ಆ ದಿವಸದಲ್ಲಿ, ಯೆರೂಸಲೇಮಿಗೆ ವಿರೋಧವಾಗಿ ಬರುವ ಜನಾಂಗಗಳನ್ನೆಲ್ಲಾ ನಾಶಮಾಡುವುದಕ್ಕೆ ನಾನು ಹುಡುಕುವೆನು.</verse>
				<verse number="10">“ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನು ಮತ್ತು ಮೊರೆಯಿಡುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನು ಅವರು ದೃಷ್ಟಿಸಿನೋಡುವರು. ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ, ಆತನ ನಿಮಿತ್ತ ಗೋಳಾಡುವರು. ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆ ಪಡುವರು.</verse>
				<verse number="11">ಆ ದಿವಸದಲ್ಲಿ ಯೆರೂಸಲೇಮಿನಲ್ಲಿ ದೊಡ್ಡ ಗೋಳಾಟವಿರುವುದು. ಮೆಗಿದ್ದೋವಿನ ತಗ್ಗಿನಲ್ಲಾದ ಹದದ್ ರಿಮ್ಮೋನಿನ ಗೋಳಾಟದ ಹಾಗೆಯೇ.</verse>
				<verse number="12">ದೇಶವು ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾಗಿ ಗೋಳಾಡುವುದು. ದಾವೀದನ ಮನೆಯ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ನಾತಾನನ ಮನೆತನದ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ;</verse>
				<verse number="13">ಲೇವಿಯರ ಮನೆತನದ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ಶಿಮ್ಮೀಯನ ಕುಲವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ.</verse>
				<verse number="14">ಮತ್ತು ಉಳಿದ ಕುಲಗಳೆಲ್ಲಾ ಪ್ರತ್ಯೇಕವಾಗಿಯೂ, ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು.”</verse>
			</chapter>
			<chapter number="13">
				<verse number="1">“ಆ ದಿವಸದಲ್ಲಿ ದಾವೀದನ ಮನೆತನದವರಿಗೂ, ಯೆರೂಸಲೇಮಿನ ನಿವಾಸಿಗಳಿಗೂ ಅವರ ಪಾಪದಿಂದ ಮತ್ತು ಅಶುದ್ಧತೆಯಿಂದ ಶುದ್ಧೀಕರಿಸಲು ಒಂದು ಬುಗ್ಗೆಯು ತೆರೆಯಲಾಗುವುದು.</verse>
				<verse number="2">“ಆ ದಿನದಲ್ಲಿ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು. ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಪ್ರವಾದಿಗಳನ್ನೂ, ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿಹೋಗುವಂತೆ ಮಾಡುವೆನು.</verse>
				<verse number="3">ಯಾವನಾದರೂ ಇನ್ನು ಪ್ರವಾದಿಸಿದರೆ, ಅವನ ಹೆತ್ತವರಾದ ತಂದೆತಾಯಿಗಳು ಅವನಿಗೆ, ‘ನೀನು ಬದುಕಬಾರದು, ಏಕೆಂದರೆ ಯೆಹೋವ ದೇವರ ಹೆಸರಿನಲ್ಲಿ ಸುಳ್ಳು ಹೇಳುತ್ತೀ,’ ಎಂದು ಹೇಳುವರು. ಅವನು ಪ್ರವಾದಿಸುವಾಗ ಅವನ ತಂದೆತಾಯಿಗಳು ಅವನನ್ನು ಇರಿದುಬಿಡುವರು.</verse>
				<verse number="4">“ಆ ದಿವಸದಲ್ಲಿ, ಪ್ರವಾದಿಗಳು ಪ್ರವಾದಿಸುವಾಗ, ಅವರು ತಮ್ಮ ತಮ್ಮ ದರ್ಶನಗಳಿಗೆ ನಾಚಿಕೆಪಡುವರು. ಅವರು ಮೋಸಗೊಳಿಸಲು ಪ್ರವಾದಿಯ ಒರಟಾದ ವಸ್ತ್ರವನ್ನು ಧರಿಸುವುದಿಲ್ಲ.</verse>
				<verse number="5">ಆದರೆ ಅವನು, ‘ನಾನು ಪ್ರವಾದಿಯಲ್ಲ, ನಾನು ಹೊಲದಲ್ಲಿ ವ್ಯವಸಾಯ ಮಾಡುವವನು, ಚಿಕ್ಕಂದಿನಿಂದ ನಾನು ಗುಲಾಮನಾಗಿದ್ದೇನೆ,’ ಎಂದು ಹೇಳುವನು.</verse>
				<verse number="6">ಆಗ ಒಬ್ಬನು ಅವನಿಗೆ, ‘ನಿನ್ನ ಕೈಗಳಲ್ಲಿರುವ ಈ ಗಾಯಗಳು ಏನು?’ ಎಂದು ಕೇಳಿದರೆ, ಅವನು, ‘ನನ್ನ ಸ್ನೇಹಿತರ ಮನೆಯಲ್ಲಿ ನನಗುಂಟಾದ ಗಾಯಗಳೇ,’ ಅನ್ನುವನು.</verse>
				<verse number="7">“ಖಡ್ಗವೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ ಎಚ್ಚರವಾಗು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಕುರುಬನನ್ನು ಹೊಡೆ, ಆಗ ಕುರಿಗಳು ಚದರಿಹೋಗುವುವು. ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು.</verse>
				<verse number="8">ಯೆಹೋವ ದೇವರು ಹೀಗೆ ಹೇಳುತ್ತಾರೆ, ಸಮಸ್ತ ದೇಶದಲ್ಲಿ ಮೂರರಲ್ಲಿ ಎರಡು ಪಾಲು ಹತರಾಗಿ ನಾಶವಾಗುವರು. ಆದರೆ ಮೂರನೆಯ ಪಾಲು, ಅದರಲ್ಲಿ ಉಳಿಯುವರು.</verse>
				<verse number="9">ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.</verse>
			</chapter>
			<chapter number="14">
				<verse number="1">ಯೆಹೋವ ದೇವರ ದಿನವು ಬರುತ್ತದೆ. ಓ ಯೆರೂಸಲೇಮೇ, ಆ ದಿನದಲ್ಲಿ ನಿನ್ನ ಐಶ್ವರ್ಯವು ಸೂರೆಯಾಗುವುದು. ಮತ್ತು ಸೂರೆಯಾದದ್ದೆಲ್ಲ ನಿನ್ನ ಗೋಡೆಗಳ ಮಧ್ಯದಲ್ಲಿ ಹಂಚಿಹೋಗುವುದು.</verse>
				<verse number="2">ನಾನು ಜನಾಂಗಗಳನ್ನೆಲ್ಲಾ ಯೆರೂಸಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು. ಪಟ್ಟಣವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಲಾಗುವುದು. ಹೆಂಗಸರು ಅತ್ಯಾಚಾರಕ್ಕೆ ಒಳಗಾಗುವರು. ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು. ಆದರೆ ಉಳಿದ ಜನರೆಲ್ಲರು ಪಟ್ಟಣದಲ್ಲೇ ಉಳಿಯುವರು.</verse>
				<verse number="3">ಆಗ ಯೆಹೋವ ದೇವರು ಹೊರಟು, ಯುದ್ಧದ ದಿವಸದಲ್ಲಿ ಹೋರಾಟ ಮಾಡಿದ ಪ್ರಕಾರವೇ, ಆ ಜನಾಂಗಗಳ ಸಂಗಡ ಅವರು ಹೋರಾಟ ಮಾಡುವರು.</verse>
				<verse number="4">ಆ ದಿವಸದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವದಿಕ್ಕಿನಲ್ಲಿರುವ ಓಲಿವ್ ಮರಗಳ ಗುಡ್ಡದ ಮೇಲೆ ನಿಲ್ಲುವುವು. ಆ ಗುಡ್ಡವು, ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವುದು. ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದುಕೊಳ್ಳುವುದು.</verse>
				<verse number="5">ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗುವಿರಿ. ಏಕೆಂದರೆ ಬೆಟ್ಟಗಳ ತಗ್ಗು ಆಚೆಲಿನವರೆಗೂ ಮುಟ್ಟುವುದು. ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ, ನೀವು ಭೂಕಂಪಕ್ಕೆ ಓಡಿ ಹೋದ ಹಾಗೆ, ಓಡಿಹೋಗುವಿರಿ. ನನ್ನ ದೇವರಾದ ಯೆಹೋವ ದೇವರು ಬರುವರು. ನಿಮ್ಮ ಸಂಗಡ ಪರಿಶುದ್ಧರೆಲ್ಲರು ಸಹ ಬರುವರು.</verse>
				<verse number="6">ಆ ದಿವಸದಲ್ಲಿ, ಬೆಳಕು ಇಲ್ಲವೆ ಕತ್ತಲೆಯು ಸ್ಪಷ್ಟವಾಗಿರದು.</verse>
				<verse number="7">ಆದರೆ ಅದು ಒಂದು ವಿಶಿಷ್ಟ ದಿವಸವಾಗಿರುವುದು. ಯೆಹೋವ ದೇವರಿಗೆ ಮಾತ್ರ ತಿಳಿದಿರುವ ಒಂದು ದಿನ ಇರುವುದು. ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ. ಆದರೆ, ಸಾಯಂಕಾಲದ ಸಮಯದಲ್ಲಿ ಬೆಳಕು ಇರುವುದು.</verse>
				<verse number="8">ಆ ದಿವಸದಲ್ಲಿ ಆಗುವುದೇನೆಂದರೆ: ಯೆರೂಸಲೇಮಿನೊಳಗಿಂದ ಜೀವವುಳ್ಳ ಪ್ರವಾಹವು ಹೊರಡುವುದು. ಅದರಲ್ಲಿ ಅರ್ಧಭಾಗವು ಪೂರ್ವದ ಉಪ್ಪು ಸಮುದ್ರಕ್ಕೆ ಮತ್ತು ಅರ್ಧಭಾಗವು ಪಶ್ಚಿಮದ ಮೆಡಿಟರೇನಿಯನ್ ಸಮುದ್ರಕ್ಕೆ ಹರಿಯುತ್ತದೆ. ಅದು ಬೇಸಿಗೆ ಕಾಲದಲ್ಲಿಯೂ, ಚಳಿಗಾಲದಲ್ಲಿಯೂ ಇರುವುದು.</verse>
				<verse number="9">ಯೆಹೋವ ದೇವರು ಭೂಮಿಗೆಲ್ಲಾ ಅರಸನಾಗಿರುವರು. ಆ ದಿವಸದಲ್ಲಿ ಯೆಹೋವ ದೇವರು ಒಬ್ಬರೇ ಇರುವರು. ಆತನ ಹೆಸರು ಒಂದೇ ಹೆಸರಾಗಿರುವುದು.</verse>
				<verse number="10">ಗೆಬ ಮೊದಲುಗೊಂಡು ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೂ ದೇಶವೆಲ್ಲಾ ಅರಾಬಾದ ಹಾಗೆ ಮಾರ್ಪಡುವುದು. ಯೆರೂಸಲೇಮ್ ತನ್ನ ಸ್ಥಳದಲ್ಲಿ ಬೆನ್ಯಾಮೀನನ ಬಾಗಿಲು ಮೊದಲುಗೊಂಡು, ಮೊದಲನೆಯ ಬಾಗಿಲಿನ ಸ್ಥಳದವರೆಗೂ, ಮೂಲೆ ಬಾಗಿಲಿನವರೆಗೂ, ಹನನೇಲನ ಗೋಪುರ ಮೊದಲುಗೊಂಡು ಅರಸನ ದ್ರಾಕ್ಷಿ ಆಲೆಗಳವರೆಗೂ ಎತ್ತರದಲ್ಲಿ ನಿವಾಸವಾಗುವುದು.</verse>
				<verse number="11">ಅದರಲ್ಲಿ ಜನರು ವಾಸವಾಗಿರುವರು. ಅಲ್ಲಿ ಇನ್ನು ಮೇಲೆ ಸಂಪೂರ್ಣವಾದ ನಾಶವಿರದು. ಆದರೆ ಯೆರೂಸಲೇಮು ಭದ್ರವಾಗಿರುವುದು.</verse>
				<verse number="12">ಯೆರೂಸಲೇಮಿಗೆ ವಿರೋಧವಾಗಿ ದಂಡು ಕಟ್ಟಿಕೊಂಡಿರುವ ಎಲ್ಲಾ ಜನರನ್ನು ಯೆಹೋವ ದೇವರು ವ್ಯಾಧಿಯಿಂದ ಬಾಧಿಸುವರು. ಹೀಗೆಯೇ, ಅವರು ನಿಂತಿರುವಾಗ, ಅವರ ಮಾಂಸವು ಕ್ಷಯಿಸಿ ಹೋಗುವುವು. ಅವರ ಕಣ್ಣುಗಳು ಕುಣಿಗಳಲ್ಲಿ ಇಂಗಿ ಹೋಗುವುವು. ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವುದು.</verse>
				<verse number="13">ಆ ದಿವಸದಲ್ಲಿ, ಯೆಹೋವ ದೇವರಿಂದಾದ ದೊಡ್ಡ ಕೋಲಾಹಲದಿಂದ ಜನರು ಭಯಭೀತಿಗೆ ಒಳಗಾಗುವರು. ಆಗ ಒಬ್ಬೊಬ್ಬನು ತನ್ನ ತನ್ನ ನೆರೆಯವನ ಕೈಯನ್ನು ಹಿಡಿಯುವನು ಮತ್ತು ಒಬ್ಬರ ಮೇಲೊಬ್ಬರು ಕೈಯೆತ್ತುವರು.</verse>
				<verse number="14">ಯೆಹೂದವೂ ಸಹ ಯೆರೂಸಲೇಮಿನಲ್ಲಿ ಯುದ್ಧಮಾಡುವುದು. ಸುತ್ತಲಿರುವ ಎಲ್ಲಾ ಜನಾಂಗಗಳ ಸಂಪತ್ತು, ಚಿನ್ನ, ಬೆಳ್ಳಿ ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲಾಗುವುದು.</verse>
				<verse number="15">ಆ ಗುಡಾರಗಳಲ್ಲಿರುವ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಮೊದಲಾದ ಎಲ್ಲಾ ಪಶುಗಳಿಗೆ ಈ ವ್ಯಾಧಿಯೇ ತಗಲುವದು.</verse>
				<verse number="16">ಯೆರೂಸಲೇಮಿಗೆ ವಿರೋಧವಾಗಿ ಬಂದ ಎಲ್ಲಾ ಜನಾಂಗಗಳಲ್ಲಿ ಉಳಿದವರೆಲ್ಲಾ ವರ್ಷ ವರ್ಷಕ್ಕೆ ಅರಸನಾದ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸುವುದಕ್ಕೂ, ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೂ ಹೋಗುವರು.</verse>
				<verse number="17">ಭೂಮಿಯ ಜನಾಂಗಗಳಲ್ಲಿ ಅರಸನಾದ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಹೋಗದಿದ್ದರೆ, ಅವರ ಮೇಲೆ ಮಳೆ ಬರುವುದಿಲ್ಲ.</verse>
				<verse number="18">ಈಜಿಪ್ಟಿನವರು ಹೋಗದಿದ್ದರೆ ಮತ್ತು ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಅವರಿಗೂ ಮಳೆ ಬರುವುದಿಲ್ಲ. ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೆ ಬಾರದ ಇತರ ಜನಾಂಗಗಳಿಗೆ ಯೆಹೋವ ದೇವರು ಬಾಧಿಸುವ ವ್ಯಾಧಿಯು ಅವರ ಮೇಲೆ ತಗಲುವುದು.</verse>
				<verse number="19">ಇದೇ ಈಜಿಪ್ಟಿನ ದಂಡನೆಯೂ, ಗುಡಾರಗಳ ಹಬ್ಬವನ್ನು ಆಚರಿಸುವುದಕ್ಕೆ ಬಾರದ ಎಲ್ಲಾ ಜನಾಂಗಗಳ ದಂಡನೆಯೂ ಆಗಿರುವುದು.</verse>
				<verse number="20">ಆ ದಿವಸದಲ್ಲಿ, ಕುದುರೆಗಳ ಘಂಟೆಗಳ ಮೇಲೆ ಯೆಹೋವ ದೇವರಿಗೆ ಪರಿಶುದ್ಧವು ಎಂದಿರುವುದು. ಯೆಹೋವ ದೇವರ ಆಲಯದ ಪಾತ್ರೆಗಳು ಬಲಿಪೀಠದ ಮುಂದಿನ ಪಾತ್ರೆಗಳ ಹಾಗಿರುವುವು.</verse>
				<verse number="21">ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಪ್ರತಿಯೊಂದು ಪಾತ್ರೆಯು ಸೇನಾಧೀಶ್ವರ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಅವುಗಳಲ್ಲಿ ಬೇಯಿಸುವರು. ಆ ದಿವಸದಲ್ಲಿ, ಕಾನಾನ್ಯನು ಸೇನಾಧೀಶ್ವರ ಯೆಹೋವ ದೇವರ ಆಲಯದಲ್ಲಿ ಇನ್ನು ಮೇಲೆ ಇರುವುದೇ ಇಲ್ಲ.</verse>
			</chapter>
		</book>
		<book number="39">
			<chapter number="1">
				<verse number="1">ಒಂದು ಪ್ರವಾದನೆ: ಇಸ್ರಾಯೇಲಿಗೆ ಮಲಾಕಿಯನ ಮುಖಾಂತರ ಬಂದ ಯೆಹೋವ ದೇವರ ವಾಕ್ಯ:</verse>
				<verse number="2">“ನಾನು ನಿಮ್ಮನ್ನು ಪ್ರೀತಿ ಮಾಡಿದೆನು” ಎಂದು ಯೆಹೋವ ದೇವರು ಹೇಳುತ್ತಾರೆ. “ನೀವಾದರೋ, ‘ಯಾವುದರಲ್ಲಿ ನೀವು ನಮ್ಮನ್ನು ಪ್ರೀತಿ ಮಾಡಿದ್ದೀರಿ?’ ಎಂದು ಕೇಳುತ್ತೀರಿ. “ಏಸಾವನು ಯಾಕೋಬನಿಗೆ ಅಣ್ಣನಲ್ಲವೋ? ಆದರೂ ನಾನು ಯಾಕೋಬನನ್ನು ಪ್ರೀತಿ ಮಾಡಿದೆನು. ಎಂದು ಯೆಹೋವ ದೇವರು ಅನ್ನುತ್ತಾರೆ.</verse>
				<verse number="3">ಏಸಾವನನ್ನು ದ್ವೇಷ ಮಾಡಿದೆನು. ಅವನ ಬೆಟ್ಟಗಳನ್ನು ಹಾಳು ಮಾಡಿ, ಅವನ ಸೊತ್ತನ್ನು ಅಡವಿಯ ನರಿಗಳಿಗೆ ಕೊಟ್ಟೆನು.”</verse>
				<verse number="4">ಎದೋಮ್ಯರು, “ನಾವು ಬಡಕಲಾದೆವು, ಆದರೆ ನಾವು ಮತ್ತೆ ಹಾಳಾದ ಸ್ಥಳಗಳನ್ನು ಕಟ್ಟುವೆವು,” ಎಂದು ಹೇಳಬಹುದು. ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು. ಜನರು ಅವರನ್ನು ದುಷ್ಟತನದ ನಾಡೆಂದೂ, ಯೆಹೋವ ದೇವರು ಎಂದೆಂದಿಗೂ ಸಿಟ್ಟು ಮಾಡುವ ಜನವೆಂದೂ ಕರೆಯುವರು.</verse>
				<verse number="5">ನಿಮ್ಮ ಕಣ್ಣುಗಳಿಂದ ನೋಡಿ, ‘ಇಸ್ರಾಯೇಲಿನ ಮೇರೆ ಆಚೆಗೂ ಯೆಹೋವ ದೇವರು ಮಹೋನ್ನತರು!’ ಎಂದು ನೀವು ಹೇಳುವಿರಿ.”</verse>
				<verse number="6">“ಮಗನು ತಂದೆಯನ್ನೂ, ದಾಸನು ಯಜಮಾನನನ್ನೂ ಸನ್ಮಾನಿಸುತ್ತಾನೆ. ಹಾಗಾದರೆ ನಾನು ತಂದೆಯಾಗಿದ್ದರೆ ನನ್ನ ಸನ್ಮಾನವೆಲ್ಲಿ? ನಾನು ಯಜಮಾನನಾಗಿದ್ದರೆ ನನಗೆ ತೋರಿಸುವ ಭಯಭಕ್ತಿಯೆಲ್ಲಿ?” “ನನ್ನ ಹೆಸರನ್ನು ಅಸಡ್ಡೆ ಮಾಡುವ ಯಾಜಕರು ನೀವೇ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ನಿಮ್ಮ ಹೆಸರನ್ನು ಯಾವುದರಲ್ಲಿ ನಾವು ಅಸಡ್ಡೆ ಮಾಡಿದ್ದೇವೆ?’ ಎಂದು ಕೇಳುತ್ತೀರಿ.”</verse>
				<verse number="7">“ನನ್ನ ಬಲಿಪೀಠದ ಮೇಲೆ ಅಪವಿತ್ರವಾದ ರೊಟ್ಟಿಯನ್ನು ಅರ್ಪಿಸುತ್ತೀರಿ. “ ‘ಯಾವುದರಲ್ಲಿ ನಿಮ್ಮನ್ನು ನಾವು ಅಪವಿತ್ರ ಮಾಡಿದ್ದೇವೆ?’ ಎಂದು ಕೇಳುತ್ತೀರಿ.” ಯೆಹೋವ ದೇವರ ಮೇಜು ಹೀನವಾದದ್ದೆಂದು ನೀವು ಹೇಳುವುದರಿಂದಲೇ!</verse>
				<verse number="8">ಇದಲ್ಲದೆ, ಕುರುಡಾದ ಪಶುಗಳನ್ನು ಬಲಿಗಾಗಿ ಅರ್ಪಿಸಿದರೆ, ಅದು ದೋಷವಲ್ಲವೋ? ಕುಂಟಾದ ಮತ್ತು ರೋಗವುಳ್ಳ ಪಶುಗಳನ್ನು ಅರ್ಪಿಸಿದರೆ, ಅದು ಕೆಟ್ಟದ್ದಲ್ಲವೋ? “ಅದನ್ನು ನಿನ್ನ ರಾಜ್ಯಪಾಲನಿಗೆ ಅರ್ಪಿಸು, ಅವನು ನಿನ್ನನ್ನು ಮೆಚ್ಚುವನೋ? ನಿಮ್ಮನ್ನು ಸ್ವೀಕಾರ ಮಾಡುವನೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.</verse>
				<verse number="9">“ಈಗ ದೇವರು ನಮ್ಮನ್ನು ಕನಿಕರಿಸುವ ಹಾಗೆ ಆತನನ್ನು ಬೇಡಿಕೊಳ್ಳಿರಿ. ನಿಮ್ಮ ಕೈಗಳಿಂದ ಅಂಥ ಅರ್ಪಣೆಯನ್ನು ಅವರು ಸ್ವೀಕರಿಸುವರೋ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.</verse>
				<verse number="10">“ನನ್ನ ಬಲಿಪೀಠದ ಮೇಲೆ ವ್ಯರ್ಥವಾಗಿ ಬೆಂಕಿ ಹಚ್ಚುವುದಕ್ಕಿಂತ, ಬಾಗಿಲು ಮುಚ್ಚುವುದು ಒಳ್ಳೆಯದು. ನಿಮ್ಮಲ್ಲಿ ನನಗೆ ಇಷ್ಟವಿಲ್ಲ ಮತ್ತು ನಿಮ್ಮ ಕೈಯಿಂದ ನಾನು ಕಾಣಿಕೆಯನ್ನು ಅಂಗೀಕರಿಸುವುದಿಲ್ಲ.</verse>
				<verse number="11">ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.</verse>
				<verse number="12">“ಆದರೆ ನೀವು ಯೆಹೋವ ದೇವರ ಮೇಜು ಅಶುದ್ಧ, ‘ಅದರ ಫಲವೂ, ಅದರ ಆಹಾರವೂ ಅಸಹ್ಯ,’ ಎಂದು ಹೇಳಿ ಅದನ್ನು ಅಪವಿತ್ರ ಮಾಡಿದ್ದೀರಿ.</verse>
				<verse number="13">ಇದಲ್ಲದೆ ನೀವು, ‘ಎಂಥಾ ಭಾರ,’ ಎಂದು ಹೇಳಿ, ನೀವು ಅದನ್ನು ತಿರಸ್ಕಾರದಿಂದ ಊದಿಬಿಟ್ಟಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಗಾಯವಾದದ್ದನ್ನೂ, ಕುಂಟಾದ ರೋಗವುಳ್ಳ ಪಶುವನ್ನೂ ನನಗೆ ಬಲಿಯಾಗಿ ಅರ್ಪಿಸುತ್ತೀರಿ. ನಾನು ಇದನ್ನು ನಿಮ್ಮ ಕೈಯಿಂದ ಅಂಗೀಕರಿಸಬಹುದೋ?” ಎಂದು ಯೆಹೋವ ದೇವರು ಹೇಳುತ್ತಾರೆ.</verse>
				<verse number="14">“ಆದರೆ ತನ್ನ ಮಂದೆಯಲ್ಲಿ ದೋಷವಿಲ್ಲದ ಗಂಡು ಪಶು ಇರಲಾಗಿ ಅದನ್ನು ಅರ್ಪಿಸಲು ಪ್ರಮಾಣಮಾಡಿ, ಯೆಹೋವ ದೇವರಿಗೆ ದೋಷವುಳ್ಳದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ, ಏಕೆಂದರೆ ನಾನು ಮಹಾ ಅರಸನು, ನನ್ನ ಹೆಸರು ಇತರ ಜನಾಂಗಗಳಲ್ಲಿ ಭಯಭಕ್ತಿಯುಳ್ಳದ್ದಾಗಿರಬೇಕು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.</verse>
			</chapter>
			<chapter number="2">
				<verse number="1">“ಈಗ ಯಾಜಕರೇ, ಈ ಎಚ್ಚರಿಕೆ ನಿಮಗಾಗಿ ಇದೆ.</verse>
				<verse number="2">ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ,” ನೀವು ಕಿವಿಗೊಡದೆ ನನ್ನ ಹೆಸರಿಗೆ ಮಹಿಮೆಯನ್ನು ಸಲ್ಲಿಸಲು ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳದೆ ಹೋದರೆ, “ನಿಮ್ಮ ಮೇಲೆ ಶಾಪವನ್ನು ಕಳುಹಿಸುವೆನು. ನಿಮ್ಮ ಆಶೀರ್ವಾದಗಳನ್ನು ಶಪಿಸುವೆನು. ಹೌದು, ಅವುಗಳನ್ನು ಆಗಲೇ ಶಪಿಸಿದ್ದಾಯಿತು, ಏಕೆಂದರೆ ನೀವು ನನ್ನನ್ನು ಘನಪಡಿಸಲು ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಲಿಲ್ಲ.</verse>
				<verse number="3">“ಇಗೋ, ನಾನು ನಿಮ್ಮ ಸಂತತಿಯನ್ನು ಗದರಿಸುವೆನು. ನಿಮ್ಮ ಮುಖಗಳ ಮೇಲೆ, ನಿಮ್ಮ ಹಬ್ಬ ಬಲಿಗಳ ಸಗಣಿ ಬಳಿಯುವೆನು. ಅದರೊಂದಿಗೆ ನೀವು ಒಯ್ಯಲಾಗುವಿರಿ.</verse>
				<verse number="4">ನಾನು ಲೇವಿಯೊಂದಿಗೆ ಮಾಡಿಕೊಂಡ ಒಡಂಬಡಿಕೆಯು ಮುಂದುವರಿಯುತ್ತದೆ. ಈ ಎಚ್ಚರಿಕೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳಿದುಕೊಳ್ಳಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.</verse>
				<verse number="5">“ನಮ್ಮ ಒಡಂಬಡಿಕೆಯು ಜೀವದ ಹಾಗೂ ಶಾಂತಿಯ ಒಡಂಬಡಿಕೆಯಾಗಿತ್ತು. ಅವುಗಳನ್ನು ನಾನೇ ಅವನಿಗೆ ಕೊಟ್ಟೆನು. ಅವನು ನನಗೆ ಭಯಪಟ್ಟು, ನನ್ನ ಹೆಸರನ್ನು ಘನಪಡಿಸಿದನು.</verse>
				<verse number="6">ಸತ್ಯ ಬೋಧನೆಯು ಅವನ ಬಾಯಲ್ಲಿ ಇತ್ತು. ಸುಳ್ಳು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ, ನ್ಯಾಯದಿಂದಲೂ ನನ್ನ ಸಂಗಡ ನಡೆದುಕೊಂಡು, ಅನೇಕರನ್ನು ಪಾಪದ ಕಡೆಯಿಂದ ತಿರುಗಿಸಿದನು.</verse>
				<verse number="7">“ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡ ತಕ್ಕದ್ದು. ದೈವ ಬೋಧನೆಯನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು, ಏಕೆಂದರೆ ಅವನು ಸೇನಾಧೀಶ್ವರ ಯೆಹೋವ ದೇವರ ದೂತನು.</verse>
				<verse number="8">ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರನ್ನು ಎಡವುವಂತೆ ಮಾಡಿದ್ದೀರಿ. ಲೇವಿಯರೊಂದಿಗಿನ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.</verse>
				<verse number="9">“ಆದ್ದರಿಂದ ನೀವು ನನ್ನ ಮಾರ್ಗಗಳನ್ನು ಕೈಗೊಳ್ಳದೆ, ನನ್ನ ನಿಯಮವನ್ನು ಬೋಧಿಸುವಾಗ ಮುಖದಾಕ್ಷಿಣ್ಯ ಮಾಡಿದ ಪ್ರಕಾರವೇ, ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆಯಾದವರನ್ನಾಗಿಯೂ, ನೀಚರನ್ನಾಗಿಯೂ ಮಾಡುವೆನು.”</verse>
				<verse number="10">ನಮ್ಮೆಲ್ಲರಿಗೆ ಒಬ್ಬನೇ ತಂದೆಯಲ್ಲವೋ? ನಮ್ಮನ್ನು ಒಬ್ಬರೇ ದೇವರು ಸೃಷ್ಟಿಸಿದರಲ್ಲವೋ? ಏಕೆ ಪ್ರತಿಯೊಬ್ಬನು ತನ್ನ ಸಹೋದರನಿಗೆ ವಿರೋಧವಾಗಿ ವಂಚನೆಯಾಗಿ ನಡೆದು, ನಮ್ಮ ತಂದೆಗಳ ಒಡಂಬಡಿಕೆಯನ್ನು ಮುರಿಯುವುದೇಕೆ?</verse>
				<verse number="11">ಯೆಹೂದವು ವಂಚನೆಯಾಗಿ ನಡೆದುಕೊಂಡಿದೆ. ಇಸ್ರಾಯೇಲಿನಲ್ಲಿಯೂ, ಯೆರೂಸಲೇಮಿನಲ್ಲಿಯೂ ಅಸಹ್ಯವಾದದ್ದನ್ನು ಮಾಡಿದೆ, ಏಕೆಂದರೆ ಯೆಹೂದವು ಯೆಹೋವ ದೇವರು ಪ್ರೀತಿಮಾಡಿದ ಪರಿಶುದ್ಧ ಆಲಯವನ್ನು ಅಪವಿತ್ರ ಮಾಡಿ, ಅನ್ಯದೇವತೆಗಳನ್ನು ಆರಾಧಿಸುವ ಮಹಿಳೆಯರನ್ನು ಮದುವೆ ಮಾಡಿಕೊಂಡಿದೆ.</verse>
				<verse number="12">ಇದನ್ನು ಮಾಡುವ ಮನುಷ್ಯನನ್ನು ಅವನು ಯಾರೇ ಆಗಲಿ, ಅವನು ಯೆಹೋವ ದೇವರಿಗೆ ಕಾಣಿಕೆ ಅರ್ಪಿಸಲು ತಂದರೂ ಸಹ, ಯಾಕೋಬನ ಗುಡಾರಗಳೊಳಗಿಂದ ಸೇನಾಧೀಶ್ವರ ಯೆಹೋವ ದೇವರು ತೆಗೆದು ಹಾಕಲಿ.</verse>
				<verse number="13">ನೀವು ಇನ್ನೊಂದನ್ನು ಮಾಡಿದ್ದೀರಿ. ಯೆಹೋವ ದೇವರ ಬಲಿಪೀಠಗಳನ್ನು ಕಣ್ಣೀರಿನಿಂದ ತುಂಬಿಸಿದ್ದೀರಿ. ಆದ್ದರಿಂದ ಆತನು ಕಾಣಿಕೆಯನ್ನು ಇನ್ನು ಮೇಲೆ ಲಕ್ಷಿಸದೆ, ಅದನ್ನು ನಿಮ್ಮ ಕೈಯಿಂದ ಮೆಚ್ಚಿಕೆಯಾಗಿ ಅಂಗೀಕರಿಸುವುದಿಲ್ಲವಾದ್ದರಿಂದ ನೀವು ಅಳುತ್ತೀರಿ, ಗೋಳಾಡುತ್ತೀರಿ.</verse>
				<verse number="14">ಆದರೂ ಯೆಹೋವ ದೇವರು ನಿನಗೂ, ನಿನ್ನ ಯೌವನದ ಹೆಂಡತಿಗೂ ಸಾಕ್ಷಿಯಾಗಿದ್ದರು. ಆದರೂ ನಿನ್ನ ಜೊತೆಯವಳೂ, ನಿನ್ನ ಒಡಂಬಡಿಕೆಯ ಹೆಂಡತಿಯೂ ಆಗಿದ್ದವಳಿಗೆ ನೀನು ಅಪನಂಬಿಗಸ್ತನಾಗಿದ್ದೀ.</verse>
				<verse number="15">ನಿನ್ನನ್ನು ಸೃಷ್ಟಿಸಿದವನು ಒಬ್ಬನೇ ಅಲ್ಲವೇ? ನೀವು ದೇಹ ಮತ್ತು ಆತ್ಮದಲ್ಲಿ ಅವರಿಗೆ ಸೇರಿದವರು. ಮತ್ತು ಒಬ್ಬರೇ ದೇವರಾಗಿರುವ ದೇವರು ಏನು ಹುಡುಕುತ್ತಾರೆ? ದೈವಿಕ ಸಂತಾನ. ಆದ್ದರಿಂದ ನೀವು ಜಾಗರೂಕರಾಗಿರಿ ಮತ್ತು ನಿಮ್ಮ ಯೌವನದ ಹೆಂಡತಿಗೆ ವಿಶ್ವಾಸದ್ರೋಹ ಮಾಡಬೇಡಿ.</verse>
				<verse number="16">“ವಿವಾಹ ವಿಚ್ಛೇದನವನ್ನು ನಾನು ಹಗೆಮಾಡುತ್ತೇನೆ,” ಎಂದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುತ್ತಾನೆ. “ತನ್ನ ಹೆಂಡತಿಗೆ ನಂಬಿಕೆದ್ರೋಹ ಬಗೆದು, ದೌರ್ಜನ್ಯ ತೋರುವವನನ್ನು ನಾನು ಹಗೆಮಾಡುತ್ತೇನೆ,” ಎಂದು ಸರ್ವಶಕ್ತರಾದ ದೇವರು ಹೇಳುತ್ತಾರೆ. ಆದ್ದರಿಂದ ನೀವು ವಂಚನೆಯುಳ್ಳವರಾಗಿ ನಡೆಯದ ಹಾಗೆ ನಿಮ್ಮ ಆತ್ಮದಲ್ಲಿ ಎಚ್ಚರಿಕೆಯಾಗಿರಿ.</verse>
				<verse number="17">“ನಿಮ್ಮ ಮಾತುಗಳಿಂದ ಯೆಹೋವ ದೇವರಿಗೆ ಬೇಸರ ಮಾಡಿದ್ದೀರಿ. “ಆದರೂ, ನಾವು ಯಾವುದರಲ್ಲಿ ಆತನಿಗೆ ಬೇಸರ ಮಾಡಿದ್ದೇವೆ?” ಎಂದು ಕೇಳುತ್ತೀರಿ. “ಕೆಟ್ಟದ್ದನ್ನು ಮಾಡುವವರೆಲ್ಲರು, ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆ ಎಂದೂ, ನ್ಯಾಯದ ದೇವರು ಎಲ್ಲಿ? ಎಂದೂ ನೀವು ಹೇಳುವುದರಿಂದಲೇ.”</verse>
			</chapter>
			<chapter number="3">
				<verse number="1">“ಇಗೋ, ನಾನು ನನ್ನ ದೂತನನ್ನು ಕಳುಹಿಸುತ್ತೇನೆ. ಅವನು ನನ್ನ ಮುಂದೆ ಮಾರ್ಗವನ್ನು ಸಿದ್ಧಮಾಡುವನು. ನೀವು ಹುಡುಕುವ ಕರ್ತರು ಫಕ್ಕನೆ ತಮ್ಮ ಆಲಯಕ್ಕೆ ಬರುವರು. ನೀವು ಇಷ್ಟಪಡುವ ಒಡಂಬಡಿಕೆಯ ದೂತನೇ, ಇಗೋ, ಬರುತ್ತಾನೆ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.</verse>
				<verse number="2">ಆದರೆ ಅವರ ಆಗಮನದ ದಿವಸದಲ್ಲಿ ಯಾರು ತಾಳುವರು? ಅವರು ಪ್ರತ್ಯಕ್ಷವಾಗುವಾಗ ಯಾರು ನಿಲ್ಲುವರು? ಏಕೆಂದರೆ ಅವರು ಅಕ್ಕಸಾಲಿಗನ ಪರಿಶೋಧಿಸುವ ಬೆಂಕಿಯ ಹಾಗೆಯೂ, ಅಗಸನ ಸಾಬೂನಿನ ಹಾಗೆಯೂ ಇದ್ದಾರೆ.</verse>
				<verse number="3">ದೇವರು ಬೆಳ್ಳಿಯನ್ನು ಪರಿಶೋಧಿಸಿ ಶುದ್ಧೀಕರಿಸುವ ಅಕ್ಕಸಾಲಿಗನಂತೆ ಕುಳಿತುಕೊಂಡು ಲೇವಿಯರನ್ನು ಶುದ್ಧಮಾಡುವರು. ಬಂಗಾರದ ಹಾಗೆಯೂ, ಬೆಳ್ಳಿಯ ಹಾಗೆಯೂ ಶುದ್ಧಮಾಡುವರು. ಆಗ ಅವರು ಯೆಹೋವ ದೇವರಿಗೆ ನೀತಿಯ ಕಾಣಿಕೆಯನ್ನು ಅರ್ಪಿಸುವರು.</verse>
				<verse number="4">ಯೆಹೂದದ ಮತ್ತು ಯೆರೂಸಲೇಮಿನ ಕಾಣಿಕೆಯು ಪೂರ್ವದಿನಗಳಲ್ಲಿ ಪುರಾತನ ಕಾಲದಲ್ಲಿ ಇದ್ದಂತೆ ಯೆಹೋವ ದೇವರಿಗೆ ಮೆಚ್ಚಿಕೆಯಾಗಿರುವುದು.</verse>
				<verse number="5">“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.</verse>
				<verse number="6">“ನಾನು ಯೆಹೋವ ದೇವರು. ನಾನು ಬದಲಾಗುವುದಿಲ್ಲ. ಆದ್ದರಿಂದ ನೀವು ಯಾಕೋಬಿನ ವಂಶಜರೇ, ನಾಶವಾಗುವುದಿಲ್ಲ.</verse>
				<verse number="7">ನಿಮ್ಮ ತಂದೆಗಳ ದಿವಸಗಳಿಂದಲೇ ನನ್ನ ನಿಯಮಗಳನ್ನು ಬಿಟ್ಟುಹೋಗಿದ್ದೀರಿ. ಅವುಗಳನ್ನು ಅನುಸರಿಸಲಿಲ್ಲ. ನನ್ನ ಬಳಿಗೆ ತಿರುಗಿಕೊಳ್ಳಿರಿ. ಆಗ ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಆದರೆ ನೀವು, ‘ಯಾವುದರಲ್ಲಿ ತಿರುಗಿಕೊಳ್ಳೋಣ?’ ಎಂದು ಹೇಳುತ್ತೀರಿ.</verse>
				<verse number="8">“ಮನುಷ್ಯನು ದೇವರಿಂದ ಕದ್ದುಕೊಳ್ಳಲು ಸಾಧ್ಯವೇ? ಆದರೂ ನೀವು ನನ್ನಿಂದ ಕಳ್ಳತನ ಮಾಡಿದ್ದೀರಿ. “ಆದರೆ ನೀವು, ‘ಯಾವುದರಲ್ಲಿ ನಿನ್ನದನ್ನು ಕಳ್ಳತನ ಮಾಡಿದ್ದೇವೆ?’ ಎಂದು ಕೇಳುತ್ತೀರಿ. “ದಶಮಭಾಗ ಮತ್ತು ಅರ್ಪಣೆಗಳಲ್ಲಿಯೇ!</verse>
				<verse number="9">ಇದರಿಂದ ಶಾಪವು ನಿಮಗಾಯಿತು, ಏಕೆಂದರೆ ನೀವು, ಈ ಸಮಸ್ತ ಜನಾಂಗವೇ ನನ್ನಲ್ಲಿ ಕಳ್ಳತನ ಮಾಡುತ್ತಿದ್ದಿರಿ.</verse>
				<verse number="10">ನನ್ನ ಆಲಯದಲ್ಲಿ ಆಹಾರ ಇರುವಂತೆ ಹತ್ತನೆಯ ಪಾಲುಗಳನ್ನೆಲ್ಲಾ ಬೊಕ್ಕಸಕ್ಕೆ ತನ್ನಿರಿ. ನಾನು ನಿಮಗೆ ಪರಲೋಕದ ಮಹಾದ್ವಾರಗಳನ್ನು ತೆರೆದು, ಸ್ಥಳ ಹಿಡಿಸಲಾರದಷ್ಟು ನಿಮಗೆ ಆಶೀರ್ವಾದವನ್ನು ಸುರಿಸದಿರುವೆನೋ, ಇಲ್ಲವೋ ಎಂಬುದನ್ನು ನೀವು ಈಗ ನನ್ನನ್ನು ಪರೀಕ್ಷಿಸಿ ನೋಡಿರಿ?” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.</verse>
				<verse number="11">“ನಿಮ್ಮ ಬೆಳೆಯನ್ನು ತಿಂದು ಬಿಡದಂತೆ ಕ್ರಿಮಿಕೀಟಗಳನ್ನು ತಡೆಯುವೆನು. ನಿಮ್ಮ ದ್ರಾಕ್ಷಿ ತೋಟಗಳಲ್ಲಿಂದ ದ್ರಾಕ್ಷಿಹಣ್ಣುಗಳನ್ನು ಉದುರಿಸಿ ಬಿಡುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.</verse>
				<verse number="12">“ಆಗ ಜನಾಂಗಗಳೆಲ್ಲಾ ನಿಮ್ಮನ್ನು ಧನ್ಯರು ಎಂದು ಕರೆಯುವರು. ಏಕೆಂದರೆ ನೀವು ರಮ್ಯವಾದ ದೇಶವಾಗುವಿರಿ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.</verse>
				<verse number="13">“ನೀವು ನನಗೆ ವಿರೋಧವಾಗಿ ಅಹಂಕಾರದಿಂದ ಮಾತುಗಳನ್ನಾಡಿದಿರಿ,” ಎಂದು ಯೆಹೋವ ದೇವರು ಹೇಳುತ್ತಾರೆ. “ಆದರೂ ನೀವು, ‘ನಿನಗೆ ವಿರೋಧವಾಗಿ ನಾವು ಏನು ಮಾತಾಡಿದ್ದೇವೆ?’ ಎನ್ನುತ್ತೀರಿ.”</verse>
				<verse number="14">“ನೀವು, ‘ದೇವರನ್ನು ಸೇವಿಸುವುದು ವ್ಯರ್ಥ, ನಾವು ಆತನ ನಿಯಮಗಳನ್ನು ಕೈಗೊಂಡು ಸೇನಾಧೀಶ್ವರ ಯೆಹೋವ ದೇವರ ಮುಂದೆ ದುಃಖಪಡುವುದರಿಂದ ಏನು ಪ್ರಯೋಜನವೆಂದೂ,</verse>
				<verse number="15">ಈಗ ನಾವು ಗರ್ವಿಷ್ಠರನ್ನು ಭಾಗ್ಯವಂತರೆಂದನ್ನುತ್ತೇವೆ. ದುಷ್ಟರು ಅಭಿವೃದ್ಧಿಯಾಗುತ್ತಿದ್ದಾರೆ. ದೇವರಿಗೆ ಸವಾಲು ಹಾಕಿದವರು ತಪ್ಪಿಸಿಕೊಂಡಿದ್ದಾರೆ’ ಎಂದು ಹೇಳಿದ್ದೀರಿ.”</verse>
				<verse number="16">ಆಗ ಯೆಹೋವ ದೇವರಿಗೆ ಭಯಪಡುವವರು, ಒಬ್ಬರ ಸಂಗಡಲೊಬ್ಬರು ಮಾತಾಡಿಕೊಂಡರು. ಯೆಹೋವ ದೇವರು ಕಿವಿಗೊಟ್ಟು ಅದನ್ನು ಕೇಳಿದರು. ಇದಲ್ಲದೆ ಯೆಹೋವ ದೇವರಿಗೆ ಭಯಪಟ್ಟು, ಅವರ ನಾಮವನ್ನು ಗೌರವಿಸುವವರ ಬಗ್ಗೆ ಅವರು ತಮ್ಮ ಮುಂದೆ ಇದ್ದ ಜ್ಞಾಪಕ ಪುಸ್ತಕದಲ್ಲಿ ಬರೆಸಿದರು.</verse>
				<verse number="17">“ನಾನು ನನ್ನ ಅಮೂಲ್ಯ ಸೊತ್ತನ್ನು ಸೇರಿಸಿಕೊಳ್ಳುವ ಆ ದಿವಸದಲ್ಲಿ ಅವರು ನನ್ನವರಾಗಿರುವರು. ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ, ಅವರನ್ನು ಕನಿಕರಿಸುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.</verse>
				<verse number="18">ಆಗ ನೀವು ನೀತಿವಂತನಿಗೂ, ದುಷ್ಟನಿಗೂ, ದೇವರ ಸೇವೆ ಮಾಡುವವನಿಗೂ, ಮಾಡದವನಿಗೂ ಇರುವ ವ್ಯತ್ಯಾಸವನ್ನು ಪುನಃ ನೋಡುವಿರಿ.</verse>
			</chapter>
			<chapter number="4">
				<verse number="1">“ಖಂಡಿತವಾಗಿ ಆ ದಿನ ಬರುತ್ತದೆ, ಅದು ಒಲೆಯಂತೆ ಉರಿಯುತ್ತದೆ. ಆಗ ಗರ್ವಿಷ್ಠರೆಲ್ಲರೂ ಕೆಟ್ಟದ್ದನ್ನು ಮಾಡುವವರೆಲ್ಲರೂ ಹುಲ್ಲಿನಂತಿರುವರು. ಬರುವ ಆ ದಿನವು ಅವರನ್ನು ಸುಟ್ಟುಬಿಡುವುದು. ಬೇರನ್ನಾದರೂ, ಕೊಂಬೆಯನ್ನಾದರೂ ಅವರಿಗೆ ಬಿಡದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.</verse>
				<verse number="2">ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.</verse>
				<verse number="3">ಆಗ ದುಷ್ಟರನ್ನು ತುಳಿದುಬಿಡುವಿರಿ. ಏಕೆಂದರೆ ನಾನು ಕಾರ್ಯಸಾಧಿಸುವ ದಿವಸದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.</verse>
				<verse number="4">“ನನ್ನ ಸೇವಕನಾದ ಮೋಶೆಯ ನಿಯಮವನ್ನು ನಾನು ಅವನಿಗೆ ಹೋರೇಬಿನಲ್ಲಿ ಸಮಸ್ತ ಇಸ್ರಾಯೇಲಿಗೋಸ್ಕರ ಆಜ್ಞಾಪಿಸಿದ್ದನ್ನೂ ವಿಧಿ ನಿಯಮಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.</verse>
				<verse number="5">“ಇಗೋ, ಯೆಹೋವ ದೇವರ ಮಹಾ ಭಯಂಕರವಾದ ದಿವಸವು ಬರುವುದಕ್ಕಿಂತ ಮುಂಚೆ ನಿಮಗೆ ಪ್ರವಾದಿಯಾದ ಎಲೀಯನನ್ನು ಕಳುಹಿಸುವೆನು.</verse>
				<verse number="6">ನಾನು ಬಂದು ಭೂಮಿಯನ್ನು ಶಾಪದಿಂದ ಹೊಡೆಯದ ಹಾಗೆ ಅವನು ತಂದೆಯರ ಹೃದಯವನ್ನು ಮಕ್ಕಳ ಕಡೆಗೂ ಮಕ್ಕಳ ಹೃದಯವನ್ನು ತಮ್ಮ ತಂದೆಯರ ಕಡೆಗೂ ತಿರುಗಿಸುವನು.”</verse>
			</chapter>
		</book>
	</testament>
	<testament name="New">
		<book number="40">
			<chapter number="1">
				<verse number="1">ಕ್ರಿಸ್ತ ಯೇಸುವಿನ ವಂಶಾವಳಿಯ ದಾಖಲೆ. ಯೇಸು ದಾವೀದನ ವಂಶದವರು, ದಾವೀದನು ಅಬ್ರಹಾಮನ ವಂಶದವನು:</verse>
				<verse number="2">ಅಬ್ರಹಾಮನು ಇಸಾಕನ ತಂದೆ, ಇಸಾಕನು ಯಾಕೋಬನ ತಂದೆ, ಯಾಕೋಬನು ಯೂದ ಮತ್ತು ಅವನ ಅಣ್ಣ ತಮ್ಮಂದಿರ ತಂದೆ,</verse>
				<verse number="3">ಯೂದನು ಪೆರೆಸ ಮತ್ತು ಜೆರಹನ ತಂದೆ, ತಾಮಾರಳು ಇವರ ತಾಯಿ, ಪೆರೆಸನು ಹೆಚ್ರೋನನ ತಂದೆ, ಹೆಚ್ರೋನನು ಅರಾಮನ ತಂದೆ,</verse>
				<verse number="4">ಅರಾಮನು ಅಮ್ಮೀನಾದಾಬನ ತಂದೆ, ಅಮ್ಮೀನಾದಾಬನು ನಹಶೋನನ ತಂದೆ, ನಹಶೋನನು ಸಲ್ಮೋನನ ತಂದೆ,</verse>
				<verse number="5">ಸಲ್ಮೋನನು ಬೋವಜನ ತಂದೆ, ಬೋವಜನ ತಾಯಿ ರಾಹಾಬಳು, ಬೋವಜನು ಓಬೇದನ ತಂದೆ, ಓಬೇದನ ತಾಯಿ ರೂತಳು, ಓಬೇದನು ಇಷಯನ ತಂದೆ,</verse>
				<verse number="6">ಇಷಯನು ರಾಜನಾದ ದಾವೀದನ ತಂದೆ. ದಾವೀದನು ಸೊಲೊಮೋನನ ತಂದೆ, ಇವನ ತಾಯಿ ಊರೀಯನ ಹೆಂಡತಿಯಾಗಿದ್ದವಳು,</verse>
				<verse number="7">ಸೊಲೊಮೋನನು ರೆಹಬ್ಬಾಮನ ತಂದೆ, ರೆಹಬ್ಬಾಮನು ಅಬೀಯನ ತಂದೆ, ಅಬೀಯನು ಆಸನ ತಂದೆ,</verse>
				<verse number="8">ಆಸನು ಯೆಹೋಷಾಫಾಟನ ತಂದೆ, ಯೆಹೋಷಾಫಾಟನು ಯೆಹೋರಾಮನ ತಂದೆ, ಯೆಹೋರಾಮನು ಉಜ್ಜೀಯನ ತಂದೆ,</verse>
				<verse number="9">ಉಜ್ಜೀಯನು ಯೋತಾಮನ ತಂದೆ, ಯೋತಾಮನು ಆಹಾಜನ ತಂದೆ, ಆಹಾಜನು ಹಿಜ್ಕೀಯನ ತಂದೆ,</verse>
				<verse number="10">ಹಿಜ್ಕೀಯನು ಮನಸ್ಸೆಯ ತಂದೆ, ಮನಸ್ಸೆಯು ಆಮೋನನ ತಂದೆ, ಆಮೋನನು ಯೋಷೀಯನ ತಂದೆ,</verse>
				<verse number="11">ಯೋಷೀಯನಿಗೆ ಯೆಕೊನ್ಯ ಮತ್ತು ಅವನ ಸಹೋದರರು ಹುಟ್ಟಿದರು, ಈ ಸಮಯದಲ್ಲಿಯೇ ಯೆಹೂದ್ಯರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು.</verse>
				<verse number="12">ಬಾಬಿಲೋನಿಗೆ ಸೆರೆಹೋದ ಮೇಲೆ: ಯೆಕೊನ್ಯನು ಶೆಯಲ್ತೀಯೇಲನನ್ನು ಪಡೆದನು, ಶೆಯಲ್ತೀಯೇಲನು ಜೆರುಬ್ಬಾಬೆಲನ ತಂದೆ,</verse>
				<verse number="13">ಜೆರುಬ್ಬಾಬೆಲನು ಅಬಿಹೂದನ ತಂದೆ, ಅಬಿಹೂದನು ಎಲಿಯಕೀಮನ ತಂದೆ, ಎಲಿಯಕೀಮನು ಅಜೋರನ ತಂದೆ,</verse>
				<verse number="14">ಅಜೋರನು ಸದೋಕನ ತಂದೆ, ಸದೋಕನು ಅಖೀಮನ ತಂದೆ, ಅಖೀಮನು ಎಲಿಹೂದನ ತಂದೆ,</verse>
				<verse number="15">ಎಲಿಹೂದನು ಎಲಿಯಾಜರನ ತಂದೆ, ಎಲಿಯಾಜರನು ಮತ್ತಾನನ ತಂದೆ, ಮತ್ತಾನನು ಯಾಕೋಬನ ತಂದೆ,</verse>
				<verse number="16">ಯಾಕೋಬನು ಯೋಸೇಫನ ತಂದೆ, ಯೋಸೇಫನು ಮರಿಯಳ ಪತಿ, ಮರಿಯಳು ಕ್ರಿಸ್ತ ಎಂದು ಕರೆಯಲಾದ, ಯೇಸುಸ್ವಾಮಿಯ ತಾಯಿ.</verse>
				<verse number="17">ಈ ರೀತಿಯಲ್ಲಿ ಅಬ್ರಹಾಮನಿಂದ ದಾವೀದನವರೆಗೆ ಹದಿನಾಲ್ಕು ತಲೆಮಾರುಗಳು, ದಾವೀದನಿಂದ ಬಾಬಿಲೋನಿಗೆ ಸೆರೆ ಹೋಗುವವರೆಗೆ ಹದಿನಾಲ್ಕು ತಲೆಮಾರುಗಳು, ಬಾಬಿಲೋನಿಗೆ ಸೆರೆಹೋದ ದಿನದಿಂದ ಕ್ರಿಸ್ತರವರೆಗೆ ಹದಿನಾಲ್ಕು ತಲೆಮಾರುಗಳು.</verse>
				<verse number="18">ಕ್ರಿಸ್ತ ಯೇಸುವಿನ ಜನನದ ವಿವರ: ಯೇಸುವಿನ ತಾಯಿ ಮರಿಯಳನ್ನು ಯೋಸೇಫನಿಗೆ ನಿಶ್ಚಯ ಮಾಡಿದ್ದರು, ಆದರೆ ಅವರಿಬ್ಬರು ಕೂಡಿಬಾಳುವುದಕ್ಕಿಂತ ಮುಂಚೆಯೇ, ಮರಿಯಳು ಪವಿತ್ರಾತ್ಮರಿಂದ ಗರ್ಭಧರಿಸಿರುವುದು ತಿಳಿದುಬಂತು.</verse>
				<verse number="19">ಯೋಸೇಫನು ನೀತಿವಂತನಾಗಿದ್ದರಿಂದ, ಆಕೆಯನ್ನು ಬಹಿರಂಗವಾಗಿ ಅವಮಾನ ಮಾಡುವುದಕ್ಕೆ ಮನಸ್ಸಿಲ್ಲದೆ, ಆಕೆಯನ್ನು ರಹಸ್ಯವಾಗಿ ಬಿಟ್ಟು ಬಿಡಬೇಕೆಂದಿದ್ದನು.</verse>
				<verse number="20">ಅವನು ಹೀಗೆ ಯೋಚಿಸುತ್ತಿದ್ದಾಗ, ಕರ್ತನ ದೂತನು ಕನಸಿನಲ್ಲಿ ಅವನಿಗೆ ಪ್ರತ್ಯಕ್ಷನಾಗಿ, “ದಾವೀದನ ವಂಶದ ಯೋಸೇಫನೇ, ಮರಿಯಳನ್ನು ನಿನ್ನ ಹೆಂಡತಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭವತಿಯಾಗಿರುವುದು ಪವಿತ್ರಾತ್ಮರಿಂದಲೇ.</verse>
				<verse number="21">ಅವಳು ಒಬ್ಬ ಮಗನನ್ನು ಹೆರುವಳು, ನೀನು ಆತನಿಗೆ, ‘ಯೇಸು ’ ಎಂದು ಹೆಸರಿಡಬೇಕು. ಏಕೆಂದರೆ ಅವರೇ ತಮ್ಮ ಜನರನ್ನು ಅವರ ಪಾಪಗಳಿಂದ ರಕ್ಷಿಸುವರು,” ಎಂದು ಹೇಳಿದನು.</verse>
				<verse number="22">ದೇವರು ತಮ್ಮ ಪ್ರವಾದಿಯ ಮುಖಾಂತರ ಹೇಳಿದ ಈ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು:</verse>
				<verse number="23">“ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.” ಈ ಹೆಸರಿನ ಅರ್ಥ, “ದೇವರು ನಮ್ಮ ಸಂಗಡ ಇದ್ದಾರೆ,” ಎಂಬುದು.</verse>
				<verse number="24">ಯೋಸೇಫನು ನಿದ್ದೆಯಿಂದ ಎದ್ದ ಮೇಲೆ, ಕರ್ತನ ದೂತನು ಆಜ್ಞಾಪಿಸಿದಂತೆ ಮರಿಯಳನ್ನು ತನ್ನ ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು.</verse>
				<verse number="25">ಆದರೆ ಅವಳು ಮಗನನ್ನು ಹೆರುವತನಕ ಯೋಸೇಫನು ಆಕೆಯೊಂದಿಗೆ ದಾಂಪತ್ಯ ಜೀವನ ಮಾಡಲಿಲ್ಲ. ಯೋಸೇಫನು ಆ ಮಗುವಿಗೆ “ಯೇಸು” ಎಂದು ಹೆಸರಿಟ್ಟನು.</verse>
			</chapter>
			<chapter number="2">
				<verse number="1">ಹೆರೋದ ರಾಜನ ಕಾಲದಲ್ಲಿ, ಯೂದಾಯದ ಬೇತ್ಲೆಹೇಮಿನಲ್ಲಿ ಯೇಸು ಜನಿಸಿದಾಗ, ಪೂರ್ವ ದೇಶದಿಂದ ಜ್ಞಾನಿಗಳು ಯೆರೂಸಲೇಮಿಗೆ ಬಂದು,</verse>
				<verse number="2">“ಯೆಹೂದ್ಯರ ಅರಸರಾಗಿ ಹುಟ್ಟಿದವರು ಎಲ್ಲಿ? ನಾವು ಅವರನ್ನು ಸೂಚಿಸುವ ನಕ್ಷತ್ರವನ್ನು ಪೂರ್ವದೇಶದಲ್ಲಿ ಕಂಡು ಅವರನ್ನು ಆರಾಧಿಸಲು ಬಂದಿದ್ದೇವೆ,” ಎಂದರು.</verse>
				<verse number="3">ಇದನ್ನು ಕೇಳಿ ಹೆರೋದ ರಾಜನು ಮತ್ತು ಯೆರೂಸಲೇಮಿನ ಜನರೆಲ್ಲರು ಕಳವಳಗೊಂಡರು.</verse>
				<verse number="4">ರಾಜನು ಯೆಹೂದ್ಯರ ಮುಖ್ಯಯಾಜಕರನ್ನೂ ನಿಯಮ ಬೋಧಕರನ್ನೂ ಕರೆದು, “ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ?” ಎಂದು ಅವರನ್ನು ವಿಚಾರಿಸಿದನು.</verse>
				<verse number="5">ಅದಕ್ಕೆ ಅವರು, “ಯೂದಾಯ ಪ್ರಾಂತದ ಬೇತ್ಲೆಹೇಮಿನಲ್ಲಿಯೇ,” ಏಕೆಂದರೆ, ಪ್ರವಾದಿಯು ಬರೆದಿರುವದು ಈ ರೀತಿಯಾಗಿದೆ:</verse>
				<verse number="6">“ ‘ಯೆಹೂದ ಪ್ರಾಂತದಲ್ಲಿರುವ ಬೇತ್ಲೆಹೇಮೇ, ಯೆಹೂದದ ಅಧಿಪತಿಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಅಲ್ಪವಲ್ಲ. ಏಕೆಂದರೆ ನನ್ನ ಪ್ರಜೆಗಳಾದ ಇಸ್ರಾಯೇಲನ್ನು ಪರಿಪಾಲಿಸಲು ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಬರುವನು,’ ” ಎಂದು ಹೇಳಿದರು.</verse>
				<verse number="7">ಆಗ ಹೆರೋದನು ಆ ಜ್ಞಾನಿಗಳನ್ನು ರಹಸ್ಯವಾಗಿ ಕರೆದು, ಆ ನಕ್ಷತ್ರ ಕಾಣಿಸಿಕೊಂಡ ಕಾಲವನ್ನು ಸೂಕ್ಷ್ಮವಾಗಿ ವಿಚಾರಿಸಿದನು.</verse>
				<verse number="8">“ನೀವು ಹೋಗಿ ಆ ಮಗುವಿನ ವಿಷಯ ಜಾಗರೂಕತೆಯಿಂದ ವಿಚಾರಿಸಿ. ಆ ಮಗು ಸಿಕ್ಕಿದ ಮೇಲೆ ನನಗೆ ತಿಳಿಸಿರಿ, ಆಗ ನಾನೂ ಬಂದು ಅದನ್ನು ಆರಾಧಿಸುವೆನು,” ಎಂದು ಹೇಳಿ ಅವರನ್ನು ಬೇತ್ಲೆಹೇಮಿಗೆ ಕಳುಹಿಸಿದನು.</verse>
				<verse number="9">ರಾಜನ ಮಾತನ್ನು ಕೇಳಿ ಅವರು ಹೊರಟಾಗ, ಪೂರ್ವದೇಶದಲ್ಲಿ ಅವರು ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು, ಅವರ ಮುಂದೆ ಮುಂದೆ ಸಾಗುತ್ತಾ, ಆ ಮಗು ಇದ್ದ ಸ್ಥಳದ ಮೇಲೆ ಬಂದು ನಿಂತಿತು.</verse>
				<verse number="10">ಅವರು ನಕ್ಷತ್ರವನ್ನು ಕಂಡು, ಬಹಳವಾಗಿ ಸಂತೋಷಪಟ್ಟರು.</verse>
				<verse number="11">ಜ್ಞಾನಿಗಳು ಮನೆಯನ್ನು ಪ್ರವೇಶಿಸಿ, ಮಗುವನ್ನು ತಾಯಿ ಮರಿಯಳ ಬಳಿ ಕಂಡು, ಮಗುವಿಗೆ ಅಡ್ಡಬಿದ್ದು ಆರಾಧಿಸಿದರು. ತಮ್ಮ ಬೊಕ್ಕಸಗಳನ್ನು ತೆರೆದು ಮಗುವಿಗೆ ಚಿನ್ನ, ಧೂಪ ಮತ್ತು ರಕ್ತಬೋಳಗಳನ್ನು ಕಾಣಿಕೆಯಾಗಿ ಸಮರ್ಪಿಸಿದರು.</verse>
				<verse number="12">ಅನಂತರ ಅವರು ಕನಸಿನಲ್ಲಿ ಹೆರೋದನ ಬಳಿಗೆ ಹಿಂತಿರುಗಬಾರದೆಂಬ ಎಚ್ಚರಿಕೆಯನ್ನು ಹೊಂದಿದ್ದರಿಂದ, ಬೇರೆ ದಾರಿಯಿಂದ ತಮ್ಮ ದೇಶಕ್ಕೆ ಹೊರಟು ಹೋದರು.</verse>
				<verse number="13">ಆ ಜ್ಞಾನಿಗಳು ಹೊರಟುಹೋದ ಮೇಲೆ, ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಪ್ರತ್ಯಕ್ಷನಾಗಿ, “ಎದ್ದೇಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟಿಗೆ ಓಡಿಹೋಗು. ನಾನು ನಿನಗೆ ತಿಳಿಸುವವರೆಗೆ ಅಲ್ಲಿಯೇ ಇರು, ಏಕೆಂದರೆ ಹೆರೋದನು ಮಗುವನ್ನು ಹುಡುಕಿ ಕೊಲ್ಲಬೇಕೆಂದಿದ್ದಾನೆ,” ಎಂದನು.</verse>
				<verse number="14">ಆಗ ಯೋಸೇಫನು ಎದ್ದು, ಆ ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಅದೇ ರಾತ್ರಿ ಈಜಿಪ್ಟಿಗೆ ಹೊರಟುಹೋದನು.</verse>
				<verse number="15">ಹೀಗೆ ಹೆರೋದನು ಸಾಯುವವರೆಗೆ ಯೋಸೇಫನು ಅಲ್ಲೇ ಇದ್ದನು. ಕರ್ತನು ತನ್ನ ಪ್ರವಾದಿಯ ಮೂಲಕ: “ಈಜಿಪ್ಟಿನಿಂದ ನನ್ನ ಮಗನನ್ನು ನಾನು ಕರೆದೆನು,” ಎಂದು ಹೇಳಿದ ಮಾತು ಇದರಿಂದ ನೆರವೇರಿತು.</verse>
				<verse number="16">ಜ್ಞಾನಿಗಳು ತನಗೆ ಮೋಸಮಾಡಿದರೆಂದು ತಿಳಿದ ಹೆರೋದನು ಬಹಳ ಕೋಪಗೊಂಡನು, ಜ್ಞಾನಿಗಳಿಂದ ಸೂಕ್ಷ್ಮವಾಗಿ ವಿಚಾರಿಸಿಕೊಂಡ ಪ್ರಕಾರವೇ, ಬೇತ್ಲೆಹೇಮ್ ಮತ್ತು ಅದರ ಸುತ್ತಮುತ್ತಲ ಪ್ರದೇಶದಲ್ಲಿದ್ದ ಎರಡು ವರ್ಷದೊಳಗಿನ ಎಲ್ಲಾ ಗಂಡು ಮಕ್ಕಳನ್ನು ಕೊಂದುಹಾಕಿಸಿದನು.</verse>
				<verse number="17">ಪ್ರವಾದಿಯಾದ ಯೆರೆಮೀಯನ ಮೂಲಕ ಹೇಳಿದ ಮಾತು ನೆರವೇರಿತು:</verse>
				<verse number="18">“ರಾಮದಲ್ಲಿ ರೋದನೆಯು ಕೇಳಿಸಿತು, ಗೋಳಾಟವೂ ಮಹಾ ಪ್ರಲಾಪವೂ ಕೇಳಿಬಂತು. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುತ್ತಾ, ಆದರಣೆ ಹೊಂದದೆ ಹೋಗಿದ್ದಾಳೆ. ಏಕೆಂದರೆ ಅವಳ ಮಕ್ಕಳು ಇನ್ನಿಲ್ಲ.”</verse>
				<verse number="19">ಹೆರೋದನು ಸತ್ತಮೇಲೆ ಈಜಿಪ್ಟಿನಲ್ಲಿದ್ದ ಯೋಸೇಫನಿಗೆ ಕರ್ತನ ದೂತನು ಕನಸಿನಲ್ಲಿ ಕಾಣಿಸಿಕೊಂಡು,</verse>
				<verse number="20">“ಎದ್ದೇಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಹಿಂದಿರುಗು, ಮಗುವಿನ ಪ್ರಾಣ ತೆಗೆಯಬೇಕೆಂದಿದ್ದವರು ಸತ್ತುಹೋದರು,” ಎಂದು ಹೇಳಿದನು.</verse>
				<verse number="21">ಆಗ ಅವನು ಎದ್ದು ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಾಯೇಲ್ ದೇಶಕ್ಕೆ ಬಂದನು.</verse>
				<verse number="22">ಆದರೆ ಹೆರೋದನ ಮಗ ಅರ್ಖೆಲಾಯನು, ತಂದೆಯ ಬದಲಾಗಿ ಯೂದಾಯ ಪ್ರಾಂತವನ್ನು ಆಳುತ್ತಿದ್ದಾನೆಂದು ಕೇಳಿ, ಅಲ್ಲಿಗೆ ಹೋಗಲು ಭಯಪಟ್ಟನು. ಆಗ ಕನಸಿನಲ್ಲಿ ಹೊಂದಿದ ಎಚ್ಚರಿಕೆಯ ಪ್ರಕಾರ ಯೋಸೇಫನು ಗಲಿಲಾಯ ಪ್ರಾಂತಕ್ಕೆ ಹೋದನು.</verse>
				<verse number="23">ಅಲ್ಲಿ ನಜರೇತ್ ಎಂಬ ಊರಲ್ಲಿ ವಾಸಮಾಡಿದನು. ಹೀಗೆ, “ನಜರಾಯನೆಂಬ ಹೆಸರು ಯೇಸುವಿಗೆ ಬರುವುದು,” ಎಂದು ಪ್ರವಾದಿಗಳು ಹೇಳಿದ ಮಾತು ನೆರವೇರಿತು.</verse>
			</chapter>
			<chapter number="3">
				<verse number="1">ಆ ದಿನಗಳಲ್ಲಿ ಸ್ನಾನಿಕನಾದ ಯೋಹಾನನು ಯೂದಾಯ ಪ್ರಾಂತದ ಅರಣ್ಯಕ್ಕೆ ಬಂದು,</verse>
				<verse number="2">“ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಸಾರುತ್ತಿದ್ದನು.</verse>
				<verse number="3">“ ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವ ಸ್ವರವು,” ಎಂದು ಪ್ರವಾದಿಯಾದ ಯೆಶಾಯನ ಮೂಲಕ ಸೂಚಿತನಾದವನು ಇವನೇ.</verse>
				<verse number="4">ಯೋಹಾನನ ಉಡುಪು ಒಂಟೆಯ ಕೂದಲಿನಿಂದ ಮಾಡಲಾಗಿತ್ತು. ಅವನು ಸೊಂಟಕ್ಕೆ ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳು ಮತ್ತು ಕಾಡುಜೇನು ಅವನ ಆಹಾರವಾಗಿತ್ತು.</verse>
				<verse number="5">ಯೆರೂಸಲೇಮಿನಿಂದಲೂ ಯೂದಾಯ ಪ್ರಾಂತದ ಎಲ್ಲಾ ಸ್ಥಳಗಳಿಂದಲೂ ಯೊರ್ದನ್ ನದಿ ಸುತ್ತಲಿರುವ ಪ್ರದೇಶದಿಂದಲೂ ಜನರು ಅವನ ಬಳಿಗೆ ಬರುತ್ತಿದ್ದರು.</verse>
				<verse number="6">ಅವರು ತಮ್ಮ ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.</verse>
				<verse number="7">ಆದರೆ ಫರಿಸಾಯರು ಹಾಗೂ ಸದ್ದುಕಾಯರಲ್ಲಿ ಅನೇಕರು ದೀಕ್ಷಾಸ್ನಾನಕ್ಕಾಗಿ ಬರುವುದನ್ನು ಕಂಡು, ಯೋಹಾನನು ಅವರಿಗೆ: “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?</verse>
				<verse number="8">ನಿಮ್ಮ ಮನಸ್ಸು ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ.</verse>
				<verse number="9">‘ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ,’ ಎಂದು ನಿಮ್ಮೊಳಗೆ ಕೊಚ್ಚಿಕೊಳ್ಳಬೇಡಿರಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಮಕ್ಕಳನ್ನು ಹುಟ್ಟಿಸಲು ಶಕ್ತರೆಂದು ನಾನು ನಿಮಗೆ ಹೇಳುತ್ತೇನೆ.</verse>
				<verse number="10">ಮರಗಳ ಬೇರಿಗೆ ಈಗಾಗಲೇ ಕೊಡಲಿ ಬಿದ್ದಿದೆ, ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕಲಾಗುವುದು.</verse>
				<verse number="11">“ನಾನಂತೂ ದೇವರ ಕಡೆಗೆ ತಿರುಗಿಕೊಂಡಿದ್ದಕ್ಕಾಗಿ ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ. ಆದರೆ ನನ್ನ ಬಳಿಕ ಬರುವವರು ನನಗಿಂತಲೂ ಶಕ್ತರು, ಅವರ ಪಾದರಕ್ಷೆಗಳನ್ನು ಹೊರಲಿಕ್ಕೂ ನಾನು ಯೋಗ್ಯನಲ್ಲ. ಅವರಾದರೋ ಪವಿತ್ರಾತ್ಮರಲ್ಲಿಯೂ ಅಗ್ನಿಯಲ್ಲಿಯೂ ನಿಮಗೆ ದೀಕ್ಷಾಸ್ನಾನ ಕೊಡುವರು.</verse>
				<verse number="12">ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ ಶುದ್ಧಮಾಡಿ ಗೋಧಿಯನ್ನು ಕಣಜದಲ್ಲಿ ತುಂಬಿಕೊಂಡು, ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.</verse>
				<verse number="13">ಆಮೇಲೆ ಯೇಸು ಯೋಹಾನನಿಂದ ದೀಕ್ಷಾಸ್ನಾನ ಪಡೆಯಲು ಗಲಿಲಾಯದಿಂದ ಯೊರ್ದನ್ ನದಿಗೆ ಬಂದರು.</verse>
				<verse number="14">ಆದರೆ ಯೋಹಾನನು ಅದಕ್ಕೆ ಅಡ್ಡಿ ಮಾಡುತ್ತಾ, “ನಾನೇ ನಿಮ್ಮಿಂದ ದೀಕ್ಷಾಸ್ನಾನ ಪಡೆಯಬೇಕಾಗಿರುವಲ್ಲಿ, ನೀವು ನನ್ನ ಬಳಿಗೆ ಬರಬಹುದೇ?” ಎಂದು ಕೇಳಿದನು.</verse>
				<verse number="15">ಯೇಸು ಉತ್ತರವಾಗಿ, “ಸದ್ಯಕ್ಕೆ ಒಪ್ಪಿಕೋ, ಹೀಗೆ ನಾವು ಸಕಲ ನೀತಿಯನ್ನೂ ನೆರವೇರಿಸಬೇಕಾಗಿದೆ,” ಎಂದು ಹೇಳಿದಾಗ, ಯೋಹಾನನು ಒಪ್ಪಿಕೊಂಡನು.</verse>
				<verse number="16">ಯೇಸು ದೀಕ್ಷಾಸ್ನಾನ ಪಡೆದುಕೊಂಡು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಸ್ವರ್ಗವು ತೆರೆಯಿತು, ದೇವರ ಆತ್ಮ ಪಾರಿವಾಳದ ಹಾಗೆ ತಮ್ಮ ಮೇಲೆ ಇಳಿದು ಬರುವುದನ್ನು ಯೇಸು ಕಂಡರು.</verse>
				<verse number="17">ಸ್ವರ್ಗದೊಳಗಿಂದ, “ಈತನು ನನ್ನ ಪ್ರಿಯ ಮಗನು. ಈತನನ್ನು ನಾನು ಮೆಚ್ಚಿದ್ದೇನೆ,” ಎಂಬ ಧ್ವನಿ ಕೇಳಿಸಿತು.</verse>
			</chapter>
			<chapter number="4">
				<verse number="1">ಆಮೇಲೆ ಸೈತಾನನಿಂದ ಶೋಧಿತರಾಗಲೆಂದು ಪವಿತ್ರಾತ್ಮರು ಯೇಸುವನ್ನು ಅರಣ್ಯಕ್ಕೆ ನಡೆಸಿದರು.</verse>
				<verse number="2">ನಲವತ್ತು ದಿನ ಹಗಲೂ ರಾತ್ರಿ ಉಪವಾಸವಿದ್ದ ಮೇಲೆ ಯೇಸುವಿಗೆ ಹಸಿವಾಯಿತು.</verse>
				<verse number="3">ಆಗ ಶೋಧಕನು ಯೇಸುವಿನ ಬಳಿ ಬಂದು, “ನೀನು ದೇವರ ಪುತ್ರನಾಗಿದ್ದರೆ, ಈ ಕಲ್ಲುಗಳು ರೊಟ್ಟಿಗಳಾಗುವಂತೆ ಆಜ್ಞಾಪಿಸು,” ಎಂದನು.</verse>
				<verse number="4">ಅದಕ್ಕೆ ಯೇಸು, “ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ, ದೇವರ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾನೆ,’ ” ಎಂದರು.</verse>
				<verse number="5">ಆಮೇಲೆ ಸೈತಾನನು ಯೇಸುವನ್ನು ಪವಿತ್ರ ನಗರಕ್ಕೆ ಕರೆದುಕೊಂಡು ಹೋಗಿ ದೇವಾಲಯದ ಅತಿ ಎತ್ತರವಾದ ಶಿಖರದ ಮೇಲೆ ನಿಲ್ಲಿಸಿ,</verse>
				<verse number="6">“ನೀನು ದೇವರ ಪುತ್ರನಾಗಿದ್ದರೆ, ಕೆಳಕ್ಕೆ ಧುಮುಕು. ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ: “ ‘ದೇವರು ನಿನ್ನ ವಿಷಯವಾಗಿ ತಮ್ಮ ದೂತರಿಗೆ ಆಜ್ಞಾಪಿಸುವರು, ನಿನ್ನ ಪಾದಗಳು ಕಲ್ಲಿಗೆ ತಗಲದಂತೆ ದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು,’ ” ಎಂದನು.</verse>
				<verse number="7">ಅದಕ್ಕೆ ಯೇಸು, “ ‘ನಿನ್ನ ದೇವರಾದ ಕರ್ತದೇವರನ್ನು ಪರೀಕ್ಷಿಸಬಾರದು’ ಎಂಬುದನ್ನು ಸಹ ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.</verse>
				<verse number="8">ಅನಂತರ ಸೈತಾನನು ಯೇಸುವನ್ನು ಬಹಳ ಎತ್ತರವಾದ ಪರ್ವತಕ್ಕೆ ಕರೆದುಕೊಂಡು ಹೋಗಿ, ಲೋಕದ ಎಲ್ಲಾ ರಾಜ್ಯಗಳನ್ನೂ ಅವುಗಳ ಮಹಿಮೆಯನ್ನೂ ಅವರಿಗೆ ತೋರಿಸಿ,</verse>
				<verse number="9">“ನೀನು ಅಡ್ಡಬಿದ್ದು ನನ್ನನ್ನು ಆರಾಧಿಸಿದರೆ ಇವೆಲ್ಲವನ್ನು ನಿನಗೆ ಕೊಡುವೆನು,” ಎಂದನು.</verse>
				<verse number="10">ಯೇಸು ಅವನಿಗೆ, “ಸೈತಾನನೇ, ತೊಲಗು. ಏಕೆಂದರೆ, ‘ನಿನ್ನ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.</verse>
				<verse number="11">ಆಗ ಸೈತಾನನು ಯೇಸುವನ್ನು ಬಿಟ್ಟುಹೋದನು. ದೇವದೂತರು ಬಂದು ಅವರಿಗೆ ಉಪಚಾರ ಮಾಡಿದರು.</verse>
				<verse number="12">ಯೋಹಾನನು ಬಂಧಿತನಾದನೆಂದು ಕೇಳಿ, ಯೇಸು ಗಲಿಲಾಯಕ್ಕೆ ಹಿಂದಿರುಗಿದರು.</verse>
				<verse number="13">ಬಳಿಕ ನಜರೇತನ್ನು ಬಿಟ್ಟು, ಜೆಬುಲೂನ್ ಮತ್ತು ನೆಫ್ತಲೀಮ್ ಪ್ರಾಂತಗಳಿಗೆ ಬಂದು ಸರೋವರದ ಬಳಿಯಲ್ಲಿದ್ದ ಕಪೆರ್ನೌಮ್ ಎಂಬ ಊರಿನಲ್ಲಿ ವಾಸಮಾಡಿದರು.</verse>
				<verse number="14">ಹೀಗೆ ಪ್ರವಾದಿ ಯೆಶಾಯನ ಮುಖಾಂತರ ಹೇಳಿಸಿರುವ ಈ ಮಾತು ನೆರವೇರಿತು. ಅದೇನೆಂದರೆ:</verse>
				<verse number="15">“ಜೆಬುಲೂನ್ ನಾಡು ಮತ್ತು ನೆಫ್ತಲೀಮ್ ನಾಡು, ಯೊರ್ದನ್ ನದಿಯ ಆಚೆ ಸರೋವರದ ಕಡೆ, ಯೆಹೂದ್ಯರಲ್ಲದವರಿರುವ ಗಲಿಲಾಯ ನಾಡು,</verse>
				<verse number="16">ಕತ್ತಲಲ್ಲಿ ವಾಸಿಸಿದ ಈ ಸ್ಥಳಗಳ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣ ಛಾಯೆಯ ಈ ಪ್ರದೇಶದಲ್ಲಿ ವಾಸಿಸುವವರಿಗೆ ಬೆಳಕು ಉದಯಿಸಿತು.”</verse>
				<verse number="17">ಅಂದಿನಿಂದ ಯೇಸು, “ದೇವರ ಕಡೆಗೆ ತಿರುಗಿಕೊಳ್ಳಿರಿ, ಪರಲೋಕ ರಾಜ್ಯವು ಸಮೀಪಿಸಿದೆ,” ಎಂದು ಬೋಧಿಸತೊಡಗಿದರು.</verse>
				<verse number="18">ಯೇಸು ಗಲಿಲಾಯ ಸರೋವರದ ತೀರದಲ್ಲಿ ನಡೆದುಹೋಗುತ್ತಿರುವಾಗ, ಪೇತ್ರ ಎನಿಸಿಕೊಂಡ ಸೀಮೋನನನ್ನೂ ಅವನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾಗಿದ್ದ ಅವರು ಸರೋವರದಲ್ಲಿ ಬಲೆ ಬೀಸುತ್ತಿದ್ದರು.</verse>
				<verse number="19">ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ. ನಾನು ನಿಮ್ಮನ್ನು, ಮನುಷ್ಯರನ್ನು ದೇವರ ಮಾರ್ಗದಲ್ಲಿ ನಡೆಸುವವರನ್ನಾಗಿ ಮಾಡುವೆನು,” ಎಂದು ಹೇಳಿದರು.</verse>
				<verse number="20">ತಕ್ಷಣವೇ, ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.</verse>
				<verse number="21">ಯೇಸು ಅಲ್ಲಿಂದ ಮುಂದೆ ಹೋಗುತ್ತಿದ್ದಾಗ ಇನ್ನಿಬ್ಬರು ಅಣ್ಣತಮ್ಮಂದಿರನ್ನು ಅಂದರೆ, ಜೆಬೆದಾಯನ ಮಗ ಯಾಕೋಬ ಮತ್ತು ಅವನ ಸಹೋದರ ಯೋಹಾನನನ್ನು ಕಂಡರು. ಅವರು ತಮ್ಮ ತಂದೆ ಜೆಬೆದಾಯನೊಡನೆ ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಪಡಿಸುತ್ತಿದ್ದರು. ಯೇಸು ಅವರನ್ನೂ ಕರೆದರು.</verse>
				<verse number="22">ಕೂಡಲೇ, ಅವರು ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.</verse>
				<verse number="23">ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ, ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರಲ್ಲಿದ್ದ ಸಕಲ ವಿಧವಾದ ವ್ಯಾಧಿಗಳನ್ನೂ ಸಕಲ ವಿಧವಾದ ಬೇನೆಗಳನ್ನೂ ಗುಣಪಡಿಸುತ್ತಾ ಬಂದರು.</verse>
				<verse number="24">ಯೇಸುವಿನ ಸುದ್ದಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿದ್ದರಿಂದ, ಜನರು ವಿವಿಧ ವ್ಯಾಧಿಗಳಿಂದಲೂ ತೀವ್ರ ವೇದನೆಯಿಂದಲೂ ಅಸ್ವಸ್ಥರಾದವರನ್ನೂ ದೆವ್ವ ಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ಅವರ ಬಳಿಗೆ ಕರೆದುಕೊಂಡು ಬಂದರು; ಯೇಸು ಅವರನ್ನೆಲ್ಲಾ ಗುಣಪಡಿಸಿದರು.</verse>
				<verse number="25">ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಹಾಗೂ ಯೊರ್ದನ್ ನದಿಯ ಆಚೆಕಡೆಯಿಂದಲೂ ಜನರು ದೊಡ್ಡ ಗುಂಪಾಗಿ ಯೇಸುವನ್ನು ಹಿಂಬಾಲಿಸಿದರು.</verse>
			</chapter>
			<chapter number="5">
				<verse number="1">ಯೇಸು ಜನರ ಗುಂಪನ್ನು ಕಂಡು, ಒಂದು ಬೆಟ್ಟವನ್ನೇರಿ ಕುಳಿತುಕೊಂಡರು. ಶಿಷ್ಯರು ಅವರ ಬಳಿಗೆ ಬಂದರು.</verse>
				<verse number="2">ಮತ್ತು ಯೇಸು ಅವರಿಗೆ ಉಪದೇಶಿಸಲು ಪ್ರಾರಂಭಿಸಿದರು. ಅವರು ಹೀಗೆ ಹೇಳಿದರು:</verse>
				<verse number="3">“ಆತ್ಮದಲ್ಲಿ ಬಡವರಾಗಿರುವವರು ಧನ್ಯರು, ಪರಲೋಕ ರಾಜ್ಯವು ಅವರದು.</verse>
				<verse number="4">ದುಃಖಿಸುವವರು ಧನ್ಯರು, ಅವರು ಆದರಣೆ ಹೊಂದುವರು.</verse>
				<verse number="5">ಸಾತ್ವಿಕರು ಧನ್ಯರು, ಅವರು ಭೂಮಿಗೆ ಬಾಧ್ಯರಾಗುವರು.</verse>
				<verse number="6">ನೀತಿಗೋಸ್ಕರ ಹಸಿದು ಬಾಯಾರುವವರು ಧನ್ಯರು, ಅವರು ತೃಪ್ತಿಹೊಂದುವರು.</verse>
				<verse number="7">ಕರುಣೆಯುಳ್ಳವರು ಧನ್ಯರು, ಅವರು ಕರುಣೆ ಪಡೆಯುವರು.</verse>
				<verse number="8">ಹೃದಯದಲ್ಲಿ ಶುದ್ಧರಾಗಿರುವವರು ಧನ್ಯರು, ಅವರು ದೇವರನ್ನು ಕಾಣುವರು.</verse>
				<verse number="9">ಸಮಾಧಾನ ಪಡಿಸುವವರು ಧನ್ಯರು, ಅವರು ದೇವರ ಮಕ್ಕಳೆನಿಸಿಕೊಳ್ಳುವರು.</verse>
				<verse number="10">ನೀತಿಯ ನಿಮಿತ್ತವಾಗಿ ಹಿಂಸೆಗೊಳಗಾಗುವವರು ಧನ್ಯರು, ಪರಲೋಕ ರಾಜ್ಯವು ಅವರದು.</verse>
				<verse number="11">“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ, ಹಿಂಸಿಸಿ ನಿಮ್ಮ ಮೇಲೆ ಎಲ್ಲಾ ವಿಧವಾದ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.</verse>
				<verse number="12">ಸಂತೋಷಪಟ್ಟು ಆನಂದಿಸಿರಿ. ಏಕೆಂದರೆ ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಅವರು ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನು ಸಹ ಇದೇ ರೀತಿಯಲ್ಲಿ ಹಿಂಸೆಪಡಿಸಿದರು.</verse>
				<verse number="13">“ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ, ಅದಕ್ಕೆ ಉಪ್ಪಿನ ರುಚಿ ಹೇಗೆ ಬಂದೀತು? ಅದು ಹೊರಗೆ ಹಾಕಿ ತುಳಿಯುವುದಕ್ಕೆ ಯೋಗ್ಯವೇ ಹೊರತು ಬೇರೆ ಯಾವ ಕೆಲಸಕ್ಕೂ ಬರುವುದಿಲ್ಲ.</verse>
				<verse number="14">“ನೀವು ಲೋಕಕ್ಕೆ ಬೆಳಕಾಗಿದ್ದೀರಿ; ಬೆಟ್ಟದ ಮೇಲಿರುವ ಊರು ಮರೆಯಾಗಿರಲಾರದು.</verse>
				<verse number="15">ದೀಪವನ್ನು ಹಚ್ಚಿ ಯಾರೂ ಅಳೆಯುವ ಪಾತ್ರೆಯೊಳಗೆ ಇಡುವುದಿಲ್ಲ, ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುತ್ತದೆ.</verse>
				<verse number="16">ಅದೇ ರೀತಿಯಲ್ಲಿ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ; ಹೀಗಾದರೆ ಜನರು ನಿಮ್ಮ ಸತ್ಕ್ರಿಯೆಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವರು.</verse>
				<verse number="17">“ಮೋಶೆಯ ನಿಯಮವನ್ನಾಗಲಿ, ಪ್ರವಾದನೆಗಳನ್ನಾಗಲಿ ರದ್ದು ಮಾಡುವುದಕ್ಕೆ ನಾನು ಬಂದೆನೆಂದು ಭಾವಿಸಬೇಡಿರಿ; ನಾನು ಅವುಗಳನ್ನು ರದ್ದುಗೊಳಿಸಲು ಬರಲಿಲ್ಲ, ನೆರವೇರಿಸಲು ಬಂದಿದ್ದೇನೆ.</verse>
				<verse number="18">ಭೂಮಿ ಆಕಾಶಗಳು ಗತಿಸಿಹೋಗುವವು, ಆದರೆ ನಿಯಮವೆಲ್ಲಾ ನೆರವೇರುವ ತನಕ ಅದರಲ್ಲಿ ಒಂದು ಚಿಕ್ಕ ಅಕ್ಷರವಾದರೂ ಚಿಕ್ಕ ಚುಕ್ಕೆಯಾದರೂ ಅಳಿದುಹೋಗುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.</verse>
				<verse number="19">ಆದ್ದರಿಂದ ಈ ಆಜ್ಞೆಗಳಲ್ಲಿ ಅತ್ಯಂತ ಚಿಕ್ಕದಾದ ಒಂದನ್ನು ಮೀರಿ, ಹಾಗೆಯೇ ಮೀರಲು ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಅತಿ ಚಿಕ್ಕವನೆಂದು ಎನಿಸಿಕೊಳ್ಳುವನು. ಆದರೆ ಈ ಆಜ್ಞೆಗಳನ್ನು ಪಾಲಿಸಿ ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಎನಿಸಿಕೊಳ್ಳುವನು.</verse>
				<verse number="20">ನಿಮ್ಮ ನೀತಿಯು ಫರಿಸಾಯರ ಮತ್ತು ನಿಯಮ ಬೋಧಕರ ನೀತಿಗಿಂತಲೂ ಹೆಚ್ಚಿನದಾಗದಿದ್ದರೆ, ನೀವು ಪರಲೋಕ ರಾಜ್ಯವನ್ನು ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.</verse>
				<verse number="21">“ ‘ನರಹತ್ಯೆ ಮಾಡಬಾರದು, ಯಾವನಾದರೂ ನರಹತ್ಯೆ ಮಾಡಿದರೆ ಅವನು ನ್ಯಾಯತೀರ್ಪಿಗೆ ಗುರಿಯಾಗುವನು,’ ಎಂದು ನಿಮ್ಮ ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಷ್ಟೇ.</verse>
				<verse number="22">ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.</verse>
				<verse number="23">“ಆದ್ದರಿಂದ, ನೀನು ನಿನ್ನ ಕಾಣಿಕೆಯನ್ನು ಸಮರ್ಪಿಸಲು ಬಲಿಪೀಠದ ಬಳಿಗೆ ತಂದಾಗ, ನಿನ್ನ ಸಹೋದರನಿಗೆ ಅಥವಾ ನಿನ್ನ ಸಹೋದರಿಗೆ ನಿನ್ನ ಮೇಲೆ ಏನೋ ವಿರೋಧವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,</verse>
				<verse number="24">ನಿನ್ನ ಕಾಣಿಕೆಯನ್ನು ಬಲಿಪೀಠದ ಮುಂದೆಯೇ ಬಿಟ್ಟು ಹೋಗಿ ಮೊದಲು ಸಹೋದರನೊಡನೆ ಅಥವಾ ಸಹೋದರಿಯೊಡನೆ ಸಂಧಾನಮಾಡಿಕೋ; ಆಮೇಲೆ ಬಂದು ನಿನ್ನ ಕಾಣಿಕೆಯನ್ನು ಸಮರ್ಪಿಸು.</verse>
				<verse number="25">“ನಿನ್ನ ಎದುರಾಳಿ ನಿನ್ನನ್ನು ನ್ಯಾಯಾಲಯಕ್ಕೂ, ನ್ಯಾಯಾಧಿಪತಿಯು ನಿನ್ನನ್ನು ಅಧಿಕಾರಿಗೆ ಒಪ್ಪಿಸಿ ಸೆರೆಮನೆಗೆ ಹಾಕದಿರುವುದಕ್ಕೂ, ಎದುರಾಳಿಯ ಸಂಗಡ ದಾರಿಯಲ್ಲಿರುವಾಗಲೇ ಬೇಗ ಸಮಾಧಾನ ಮಾಡಿಕೋ.</verse>
				<verse number="26">ಇಲ್ಲದಿದ್ದರೆ, ನೀನು ಕೊನೆಯ ಪೈಸೆಯನ್ನಾದರೂ ಸಲ್ಲಿಸುವವರೆಗೂ ಅಲ್ಲಿಂದ ಹೊರಗೆ ಬರುವುದೇ ಇಲ್ಲವೆಂದು ನಿನಗೆ ಸತ್ಯವಾಗಿ ಹೇಳುತ್ತೇನೆ.</verse>
				<verse number="27">“ ‘ವ್ಯಭಿಚಾರ ಮಾಡಬಾರದು,’ ಎಂದು ಹೇಳಿದ್ದನ್ನು ನೀವು ಕೇಳಿದ್ದೀರಷ್ಟೇ.</verse>
				<verse number="28">ಆದರೆ ಒಬ್ಬ ಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ಆಗಲೇ ತನ್ನ ಹೃದಯದಲ್ಲಿ ಆಕೆಯ ಸಂಗಡ ವ್ಯಭಿಚಾರ ಮಾಡಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ.</verse>
				<verse number="29">ಆದ್ದರಿಂದ ನಿನ್ನ ಬಲಗಣ್ಣು ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕಿತ್ತೆಸೆದುಬಿಡು. ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು.</verse>
				<verse number="30">ನಿನ್ನ ಬಲಗೈ ನಿನ್ನ ಪಾಪಕ್ಕೆ ಕಾರಣವಾದರೆ, ಅದನ್ನು ನೀನು ಕತ್ತರಿಸಿ ಬಿಸಾಡಿಬಿಡು; ಏಕೆಂದರೆ ನಿನ್ನ ಇಡೀ ದೇಹ ನರಕದಲ್ಲಿ ಎಸೆಯುವುದಕ್ಕಿಂತ ನಿನ್ನ ಒಂದು ಅಂಗವು ನಾಶವಾಗುವುದು ನಿನಗೆ ಒಳಿತು.</verse>
				<verse number="31">“ಇದಲ್ಲದೆ, ‘ತನ್ನ ಹೆಂಡತಿಯನ್ನು ಬಿಡುವವನು ಆಕೆಗೆ ವಿವಾಹ ವಿಚ್ಛೇದನ ಪತ್ರವನ್ನು ಕೊಡಲಿ,’ ಎಂದು ಹೇಳಿದೆಯಷ್ಟೆ.</verse>
				<verse number="32">ನಾನು ನಿಮಗೆ ಹೇಳುವುದೇನೆಂದರೆ, ಹಾದರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ; ವಿವಾಹ ವಿಚ್ಛೇದನೆ ಹೊಂದಿದವಳನ್ನು ಮದುವೆ ಆಗುವವನು ವ್ಯಭಿಚಾರ ಮಾಡಿದವನಾಗುತ್ತಾನೆ.</verse>
				<verse number="33">“ ‘ಇದಲ್ಲದೆ ನೀನು ಆಣೆಯಿಟ್ಟರೆ ಅದನ್ನು ಮೀರಬಾರದು, ಕರ್ತನಿಗೆ ಮಾಡಿದ ಆಣೆಗಳನ್ನು ನೆರವೇರಿಸಲೇಬೇಕು,’ ಎಂದು ನಿಮ್ಮ ಪೂರ್ವಿಕರಿಗೆ ಹೇಳಿರುವುದನ್ನು ಕೇಳಿದ್ದೀರಿ.</verse>
				<verse number="34">ಆದರೆ ನಾನು ನಿಮಗೆ ಹೇಳುವುದೇನೆಂದರೆ, ಆಣೆಯಿಡಲೇ ಬೇಡಿರಿ. ಪರಲೋಕದ ಮೇಲೆ ಆಣೆ ಇಡಬೇಡಿರಿ, ಏಕೆಂದರೆ ಅದು ದೇವರ ಸಿಂಹಾಸನವು;</verse>
				<verse number="35">ಭೂಮಿಯ ಮೇಲೆ ಆಣೆ ಇಡಬೇಡಿರಿ, ಏಕೆಂದರೆ ಅದು ದೇವರ ಪಾದಪೀಠವು. ಯೆರೂಸಲೇಮಿನ ಮೇಲೆ ಆಣೆ ಇಡಬೇಡಿರಿ, ಏಕೆಂದರೆ ಅದು ಮಹಾರಾಜನ ಪಟ್ಟಣವಾಗಿದೆ.</verse>
				<verse number="36">ನಿನ್ನ ತಲೆಯ ಮೇಲೂ ಆಣೆಯಿಡುವುದು ಬೇಡ, ಏಕೆಂದರೆ ನೀನು ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲಾರೆ.</verse>
				<verse number="37">ಆದ್ದರಿಂದ ನಿಮ್ಮ ಮಾತು ಹೌದಾದರೆ ‘ಹೌದು’ ಇಲ್ಲವಾದರೆ ‘ಇಲ್ಲ’ ಎಂದಿರಲಿ. ಇದಕ್ಕಿಂತ ಹೆಚ್ಚಿನದು ಕೆಡುಕನಿಂದ ಬಂದದ್ದು.</verse>
				<verse number="38">“ ‘ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು,’ ಎಂದು ಹೇಳಿರುವುದನ್ನು ನೀವು ಕೇಳಿದ್ದೀರಿ.</verse>
				<verse number="39">ಆದರೆ ನಾನು ನಿಮಗೆ ಹೇಳುವುದೇನೆಂದರೆ, ಕೆಡುಕನನ್ನು ಎದುರಿಸಬೇಡಿರಿ. ಯಾವನಾದರೂ ನಿನ್ನ ಬಲಗೆನ್ನೆಗೆ ಹೊಡೆದರೆ, ಅವನಿಗೆ ಮತ್ತೊಂದು ಕೆನ್ನೆಯನ್ನೂ ತಿರುಗಿಸಿಕೊಡು.</verse>
				<verse number="40">ನಿನ್ನೊಡನೆ ವ್ಯಾಜ್ಯ ಮಾಡಿ ನಿನ್ನ ಅಂಗಿಯನ್ನು ನಿನ್ನಿಂದ ಕಿತ್ತುಕೊಳ್ಳುವವನಿಗೆ, ನಿನ್ನ ಮೇಲಂಗಿಯನ್ನೂ ಕೊಟ್ಟುಬಿಡು.</verse>
				<verse number="41">ಯಾವನಾದರೂ ನಿನ್ನನ್ನು ಒಂದು ಕಿಲೋಮೀಟರು ದೂರ ಬಾ ಎಂದು ಒತ್ತಾಯ ಮಾಡಿದರೆ, ಅವನೊಡನೆ ಎರಡು ಕಿಲೋಮೀಟರು ದೂರ ಹೋಗು;</verse>
				<verse number="42">ಕೇಳುವವನಿಗೆ ಕೊಡು, ನಿನ್ನಿಂದ ಸಾಲ ಕೇಳುವವನ ಕಡೆಯಿಂದ ಮುಖ ತಿರುಗಿಸಿಕೊಳ್ಳಬೇಡ.</verse>
				<verse number="43">“ ‘ನಿನ್ನ ನೆರೆಯವನನ್ನು ಪ್ರೀತಿಸಿ, ನಿನ್ನ ವೈರಿಯನ್ನು ದ್ವೇಷಿಸು,’ ಎಂದು ಹೇಳಿರುವುದನ್ನು ಕೇಳಿದ್ದೀರಿ.</verse>
				<verse number="44">ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಹಿಂಸಿಸುವವರಿಗೋಸ್ಕರ ಪ್ರಾರ್ಥಿಸಿರಿ.</verse>
				<verse number="45">ಹೀಗೆ ಮಾಡಿದರೆ, ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾಗುವಿರಿ. ಅವರು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ. ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆ ಸುರಿಸುತ್ತಾರೆ.</verse>
				<verse number="46">ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ನಿಮಗೇನು ಫಲ? ಸುಂಕದವರೂ ಹಾಗೆ ಮಾಡುವುದಿಲ್ಲವೇ?</verse>
				<verse number="47">ನಿಮ್ಮ ಸ್ವಂತದವರನ್ನು ಮಾತ್ರ ವಂದಿಸಿದರೆ ಹೆಚ್ಚೇನು ಮಾಡಿದ ಹಾಗಾಯಿತು? ಯೆಹೂದ್ಯರಲ್ಲದವರು ಸಹ ಹಾಗೆಯೇ ಮಾಡುತ್ತಾರಲ್ಲವೇ?</verse>
				<verse number="48">ಆದ್ದರಿಂದ, ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.</verse>
			</chapter>
			<chapter number="6">
				<verse number="1">“ಜನರು ನೋಡಲಿ ಎಂದು ಅವರ ಮುಂದೆ, ನಿಮ್ಮ ದಾನಧರ್ಮಗಳನ್ನು ಮಾಡದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಪರಲೋಕದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಕ್ಕುವುದಿಲ್ಲ.</verse>
				<verse number="2">“ಆದ್ದರಿಂದ ನೀನು ದಾನಧರ್ಮ ಮಾಡುವಾಗ, ಜನರಿಂದ ಹೊಗಳಿಸಿಕೊಳ್ಳಬೇಕೆಂದು ಕಪಟಿಗಳ ಹಾಗೆ ಸಭಾಮಂದಿರಗಳಲ್ಲಿಯೂ ಬೀದಿಗಳಲ್ಲಿಯೂ ತುತೂರಿಯನ್ನು ಊದಿಸಬೇಡ. ಅವರು ತಮ್ಮ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.</verse>
				<verse number="3">ಆದರೆ ನೀನು ದಾನಧರ್ಮ ಮಾಡುವಾಗ, ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೆ ತಿಳಿಯದಿರಲಿ.</verse>
				<verse number="4">ಹೀಗೆ ನಿನ್ನ ದಾನಧರ್ಮವು ಗುಟ್ಟಾಗಿರುವಾಗ, ಅಂತರಂಗದಲ್ಲಿ ಮಾಡುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.</verse>
				<verse number="5">“ನೀವು ಪ್ರಾರ್ಥನೆ ಮಾಡುವಾಗ, ಕಪಟಿಗಳಂತೆ ಮಾಡಬೇಡಿರಿ. ಅವರು ಜನರಿಗೆ ಕಾಣುವಂತೆ ಸಭಾಮಂದಿರಗಳಲ್ಲಿಯೂ ಬೀದಿಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವುದಕ್ಕೆ ಇಷ್ಟಪಡುತ್ತಾರೆ. ಅವರು ತಮ್ಮ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.</verse>
				<verse number="6">ಆದರೆ ನೀನು ಪ್ರಾರ್ಥನೆ ಮಾಡುವಾಗ, ನಿನ್ನ ಕೋಣೆಯೊಳಗೆ ಹೋಗಿ, ಬಾಗಿಲನ್ನು ಮುಚ್ಚಿ ಅದೃಶ್ಯವಾಗಿರುವ ನಿನ್ನ ತಂದೆಗೆ ಪ್ರಾರ್ಥನೆ ಸಲ್ಲಿಸು. ಆಗ ರಹಸ್ಯದಲ್ಲಿ ನಡೆಯುವುದನ್ನು ಕಾಣುವ ನಿನ್ನ ತಂದೆ ನಿನಗೆ ಪ್ರತಿಫಲ ಕೊಡುವರು.</verse>
				<verse number="7">ಆದರೆ ನೀವು ಪ್ರಾರ್ಥನೆ ಮಾಡುವಾಗ ಯೆಹೂದ್ಯರಲ್ಲದವರಂತೆ ವ್ಯರ್ಥವಾಗಿ ಹೇಳಿದ್ದನ್ನೇ ಪದೇಪದೇ ಹೇಳಬೇಡಿರಿ. ತಮ್ಮ ಅನೇಕ ಮಾತುಗಳ ದೆಸೆಯಿಂದ ತಮ್ಮ ಪ್ರಾರ್ಥನೆಯನ್ನು ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ.</verse>
				<verse number="8">ನೀವು ಅವರಂತೆ ಇರಬೇಡಿರಿ, ಏಕೆಂದರೆ ನೀವು ಕೇಳುವುದಕ್ಕೆ ಮೊದಲೇ, ನಿಮ್ಮ ತಂದೆಗೆ ನಿಮ್ಮ ಅಗತ್ಯಗಳು ತಿಳಿದಿವೆ.</verse>
				<verse number="9">“ಆದ್ದರಿಂದ ನೀವು ಹೀಗೆ ಪ್ರಾರ್ಥಿಸಿರಿ: “ ‘ಪರಲೋಕದಲ್ಲಿರುವ ನಮ್ಮ ತಂದೆಯೇ, ನಿಮ್ಮ ನಾಮವು ಪರಿಶುದ್ಧವೆಂದು ಎಣಿಸಲಾಗಲಿ,</verse>
				<verse number="10">ನಿಮ್ಮ ರಾಜ್ಯವು ಬರಲಿ; ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.</verse>
				<verse number="11">ನಮ್ಮ ಅನುದಿನದ ಆಹಾರವನ್ನು ನಮಗೆ ಈ ದಿನವೂ ದಯಪಾಲಿಸಿರಿ.</verse>
				<verse number="12">ನಮಗೆ ಸಾಲಮಾಡಿದವರನ್ನು ನಾವು ಕ್ಷಮಿಸಿದಂತೆ, ನಮ್ಮ ಸಾಲಗಳನ್ನು ಕ್ಷಮಿಸಿರಿ.</verse>
				<verse number="13">ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್. ’</verse>
				<verse number="14">ನಿಮಗೆ ವಿರೋಧವಾಗಿ ತಪ್ಪುಮಾಡುವವರನ್ನು ನೀವು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮನ್ನು ಕ್ಷಮಿಸುವರು.</verse>
				<verse number="15">ಆದರೆ ನೀವು ಬೇರೆಯವರ ತಪ್ಪುಗಳನ್ನು ಕ್ಷಮಿಸದಿದ್ದರೆ, ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.</verse>
				<verse number="16">“ನೀವು ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪಗೆ ಮಾಡಿಕೊಳ್ಳಬೇಡಿರಿ, ತಾವು ಉಪವಾಸ ಮಾಡುತ್ತಿದ್ದೇವೆಂದು ಜನರಿಗೆ ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ತಮ್ಮ ಮುಖವನ್ನು ಬಾಡಿಸಿಕೊಂಡಿರುತ್ತಾರೆ. ಅವರು ತಮಗೆ ಬರತಕ್ಕ ಪ್ರತಿಫಲವನ್ನು ಪೂರ್ತಿಯಾಗಿ ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.</verse>
				<verse number="17">ಆದರೆ ನೀನು ಉಪವಾಸ ಮಾಡುವಾಗ, ತಲೆಗೆ ಎಣ್ಣೆ ಹಚ್ಚಿಕೊಂಡು, ಮುಖ ತೊಳೆದುಕೋ.</verse>
				<verse number="18">ಹೀಗೆ ಮಾಡಿದರೆ, ಕಾಣದಿರುವ ನಿನ್ನ ತಂದೆಯ ಹೊರತು ಬೇರೆ ಯಾರಿಗೂ ನೀನು ಉಪವಾಸದಿಂದಿರುವುದು ತಿಳಿಯುವುದಿಲ್ಲ ಮತ್ತು ಗುಟ್ಟಾಗಿ ಮಾಡುವುದನ್ನು ಕಾಣುವ ನಿನ್ನ ತಂದೆ, ನಿನಗೆ ಪ್ರತಿಫಲ ಕೊಡುವರು.</verse>
				<verse number="19">“ಭೂಲೋಕದಲ್ಲಿ ನಿಮಗೋಸ್ಕರ ಆಸ್ತಿಪಾಸ್ತಿಯನ್ನು ಕೂಡಿಸಿಡಬೇಡಿರಿ, ಇಲ್ಲಿ ಅದಕ್ಕೆ ನುಸಿ ಮತ್ತು ಕಿಲುಬು ಹಿಡಿದು ಹಾಳಾಗುವುದು ಇಲ್ಲವೆ ಕಳ್ಳರು ಕನ್ನಾಕೊರೆದು ಕದಿಯುವರು.</verse>
				<verse number="20">ಆದರೆ ಪರಲೋಕದಲ್ಲಿ ನಿಮಗಾಗಿ ನಿಕ್ಷೇಪವನ್ನು ಕೂಡಿಟ್ಟುಕೊಳ್ಳಿರಿ, ಅಲ್ಲಿ ಅದಕ್ಕೆ ನುಸಿ ಮತ್ತು ಕಿಲುಬು ಹಿಡಿದು ಹಾಳಾಗುವುದಿಲ್ಲ. ಕಳ್ಳರು ಕನ್ನ ಕೊರೆದು ಕದಿಯುವುದಿಲ್ಲ.</verse>
				<verse number="21">ನಿಮ್ಮ ಸಂಪತ್ತು ಇರುವಲ್ಲಿಯೇ, ನಿಮ್ಮ ಹೃದಯವು ಸಹ ಇರುವುದು.</verse>
				<verse number="22">“ಕಣ್ಣು ದೇಹಕ್ಕೆ ದೀಪವಾಗಿದೆ. ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಬೆಳಕಾಗಿರುವುದು.</verse>
				<verse number="23">ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ, ನಿನ್ನ ದೇಹವೆಲ್ಲಾ ಕತ್ತಲಾಗಿರುವುದು. ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವುದಾದರೆ ಅದು ಎಂತಹ ಕಾರ್ಗತ್ತಲಲ್ಲವೇ!</verse>
				<verse number="24">“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ.</verse>
				<verse number="25">“ಆದ್ದರಿಂದ ನಿಮ್ಮ ಜೀವನಕ್ಕಾಗಿ, ಏನು ಊಟಮಾಡಬೇಕು, ಏನು ಕುಡಿಯಬೇಕು ಅಥವಾ ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ. ಊಟಕ್ಕಿಂತ ಪ್ರಾಣವೂ ವಸ್ತ್ರಕ್ಕಿಂತ ದೇಹವೂ ಮೇಲಾದದ್ದಲ್ಲವೇ?</verse>
				<verse number="26">ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ. ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದಿಲ್ಲ. ಆದರೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಪೋಷಿಸುತ್ತಾರೆ. ಅವುಗಳಿಗಿಂತ ನೀವು ಎಷ್ಟೋ ಶ್ರೇಷ್ಠರಲ್ಲವೇ?</verse>
				<verse number="27">ನೀವು ಚಿಂತಿಸುವುದರಿಂದ ನಿಮ್ಮ ಜೀವನಕ್ಕೆ ಒಂದು ತಾಸನ್ನು ಕೂಡಿಸಲು ಸಾಧ್ಯವೇ?</verse>
				<verse number="28">“ನೀವು ಉಡುಪಿನ ವಿಷಯ ಚಿಂತಿಸುವುದೇಕೆ? ಅಡವಿಯಲ್ಲಿ ಹೂವುಗಳು ಬೆಳೆಯುವುದನ್ನು ಗಮನಿಸಿರಿ. ಅವು ದುಡಿಯುವುದಿಲ್ಲ, ನೂಲುವುದಿಲ್ಲ.</verse>
				<verse number="29">ಆದರೂ ಅರಸನಾದ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಆ ಹೂವುಗಳಲ್ಲಿ ಒಂದರಂತೆಯಾದರೂ ಉಡುಪನ್ನು ಧರಿಸಿರಲಿಲ್ಲ ಎಂದು, ನಾನು ನಿಮಗೆ ಹೇಳುತ್ತೇನೆ.</verse>
				<verse number="30">ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಇನ್ನೂ ಎಷ್ಟೋ ಹೆಚ್ಚಾಗಿ ಉಡಿಸುವರಲ್ಲವೇ?</verse>
				<verse number="31">ಆದ್ದರಿಂದ, ‘ಏನು ಊಟಮಾಡಬೇಕು? ಏನು ಕುಡಿಯಬೇಕು ಮತ್ತು ಏನು ಧರಿಸಬೇಕು?’ ಎಂದು ಚಿಂತಿಸಬೇಡಿರಿ.</verse>
				<verse number="32">ಇವೆಲ್ಲವನ್ನು ದೇವರನ್ನು ಅರಿಯದವರು ಹುಡುಕುತ್ತಾರೆ. ಇವೆಲ್ಲಾ ನಿಮಗೆ ಅವಶ್ಯವೆಂದು ಪರಲೋಕದಲ್ಲಿರುವ ನಿಮ್ಮ ತಂದೆಯು ತಿಳಿದಿದ್ದಾರೆ.</verse>
				<verse number="33">ನೀವು ಮೊದಲು ದೇವರ ರಾಜ್ಯವನ್ನೂ ಅದರ ನೀತಿಯನ್ನೂ ಹುಡುಕಿರಿ. ಆಗ ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.</verse>
				<verse number="34">ಆದ್ದರಿಂದ, ನಾಳೆಯ ವಿಷಯವಾಗಿ ಚಿಂತಿಸಬೇಡಿರಿ. ನಾಳೆಯ ದಿನವು ತನ್ನದನ್ನು ತಾನೇ ಚಿಂತಿಸಿಕೊಳ್ಳುವುದು, ಆ ದಿನದ ಪಾಡು ಆ ದಿನಕ್ಕೆ ಸಾಕು.</verse>
			</chapter>
			<chapter number="7">
				<verse number="1">“ತೀರ್ಪುಮಾಡಬೇಡಿರಿ, ಆಗ ನಿಮಗೂ ಸಹ ತೀರ್ಪಾಗುವುದಿಲ್ಲ.</verse>
				<verse number="2">ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.</verse>
				<verse number="3">“ನೀನು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ನೋಡುವುದೇಕೆ?</verse>
				<verse number="4">ನಿನ್ನ ಕಣ್ಣಿನಲ್ಲಿಯೇ ಮರದ ದಿಮ್ಮಿ ಇರುವಾಗ, ನಿನ್ನ ಸಹೋದರನಿಗೆ, ‘ನಾನು ನಿನ್ನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆದುಬಿಡುತ್ತೇನೆ,’ ಎಂದು ನೀನು ಹೇಳುವುದು ಹೇಗೆ?</verse>
				<verse number="5">ಕಪಟಿಯೇ, ಮೊದಲು ನಿನ್ನ ಸ್ವಂತ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ತೆಗೆದುಹಾಕು. ಆಮೇಲೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯಲು, ನಿನ್ನ ಕಣ್ಣು ಸ್ಪಷ್ಟವಾಗಿ ಕಾಣುವುದು.</verse>
				<verse number="6">“ಪವಿತ್ರವಾದದ್ದನ್ನು ನಾಯಿಗಳಿಗೆ ಕೊಡಬೇಡಿರಿ. ಹಂದಿಗಳ ಮುಂದೆ ನಿಮ್ಮ ಮುತ್ತುಗಳನ್ನು ಚೆಲ್ಲಬೇಡಿರಿ. ಹಾಗೆ ಮಾಡಿದರೆ ಹಂದಿಗಳು ಮುತ್ತುಗಳನ್ನು ತಮ್ಮ ಕಾಲುಗಳಿಂದ ತುಳಿದು ಹಾಕಿಯಾವು. ನಾಯಿಗಳು ಹಿಂತಿರುಗಿ ಬಂದು ನಿಮ್ಮನ್ನು ಸೀಳಿಬಿಟ್ಟಾವು.</verse>
				<verse number="7">“ಬೇಡಿಕೊಳ್ಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.</verse>
				<verse number="8">ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬರು ಪಡೆದುಕೊಳ್ಳುವರು; ಹುಡುಕುವವರಿಗೆ ಸಿಗುವುದು; ತಟ್ಟುವವರಿಗೆ ಬಾಗಿಲು ತೆರೆಯಲಾಗುವುದು.</verse>
				<verse number="9">“ನಿಮ್ಮಲ್ಲಿ ಯಾವನಾದರೂ ತನ್ನ ಮಗನು ರೊಟ್ಟಿಯನ್ನು ಕೇಳಿದರೆ ಅವನಿಗೆ ಕಲ್ಲನ್ನು ಕೊಡುವನೇ?</verse>
				<verse number="10">ಇಲ್ಲವೆ ಮೀನನ್ನು ಕೇಳಿದರೆ ಅವನಿಗೆ ಹಾವನ್ನು ಕೊಡುವನೇ?</verse>
				<verse number="11">ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ತಮ್ಮಲ್ಲಿ ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯವುಗಳನ್ನು ಕೊಡುವರಲ್ಲವೇ!</verse>
				<verse number="12">ಆದ್ದರಿಂದ, ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಬಯಸುತ್ತೀರೋ, ಅದರಂತೆಯೇ ನೀವು ಅವರಿಗೆ ಮಾಡಿರಿ; ಇದೇ ನಿಯಮ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶವು.</verse>
				<verse number="13">“ಇಕ್ಕಟ್ಟಾದ ಬಾಗಿಲಿನಿಂದ ಪ್ರವೇಶಿಸಿರಿ. ಏಕೆಂದರೆ ನಾಶಕ್ಕೆ ಒಯ್ಯುವ ಬಾಗಿಲು, ಅಗಲವೂ ಅದರ ಮಾರ್ಗವು ವಿಶಾಲವೂ ಆಗಿವೆ; ಅದರೊಳಗೆ ಪ್ರವೇಶಿಸುವವರು ಅನೇಕರು.</verse>
				<verse number="14">ಜೀವಕ್ಕೆ ಒಯ್ಯುವ ಬಾಗಿಲು ಇಕ್ಕಟ್ಟಾದದ್ದೂ ದಾರಿಯು ಕಷ್ಟಕರವಾದದ್ದೂ ಆಗಿದೆ; ಅದನ್ನು ಕಂಡು ಹಿಡಿಯುವವರು ಕೆಲವರು ಮಾತ್ರ.</verse>
				<verse number="15">“ಕುರಿಯ ವೇಷಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆ. ಏಕೆಂದರೆ ಅವರು ಒಳಗೆ ಕ್ರೂರವಾದ ತೋಳಗಳಾಗಿದ್ದಾರೆ.</verse>
				<verse number="16">ಅವರವರ ಫಲಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಜನರು ಮುಳ್ಳುಗಳಿಂದ ದ್ರಾಕ್ಷಿಯನ್ನೂ ದತ್ತೂರಿ ಗಿಡಗಳಿಂದ ಅಂಜೂರಗಳನ್ನೂ ಕೀಳುವರೋ?</verse>
				<verse number="17">ಅದರಂತೆಯೇ, ಪ್ರತಿಯೊಂದು ಒಳ್ಳೆಯ ಮರವು ಒಳ್ಳೆಯ ಫಲವನ್ನು ಕೊಡುತ್ತದೆ. ಆದರೆ ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ.</verse>
				<verse number="18">ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡಲಾರದು, ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡಲಾರದು.</verse>
				<verse number="19">ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕುವರು.</verse>
				<verse number="20">ಆದ್ದರಿಂದ ಅವರವರ ಫಲಗಳಿಂದಲೇ ನೀವು ಅವರನ್ನು ತಿಳಿದುಕೊಳ್ಳುವಿರಿ.</verse>
				<verse number="21">“ನನ್ನನ್ನು, ‘ಸ್ವಾಮೀ, ಸ್ವಾಮೀ,’ ಎಂದು ಹೇಳುವವರೆಲ್ಲರೂ ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ. ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ಅದರಲ್ಲಿ ಪ್ರವೇಶಿಸುವನು.</verse>
				<verse number="22">ಆ ದಿನದಲ್ಲಿ, ‘ಕರ್ತದೇವರೇ, ಕರ್ತದೇವರೇ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿಮ್ಮ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?’ ಎಂದು ಅನೇಕರು ನನಗೆ ಹೇಳುವರು.</verse>
				<verse number="23">ಆಗ ನಾನು ಅವರಿಗೆ, ‘ನಿಮ್ಮನ್ನು ನಾನೆಂದೂ ಅರಿಯೆನು, ನಿಯಮ ಮೀರಿ ಬಾಳಿದವರೇ ನನ್ನಿಂದ ತೊಲಗಿಹೋಗಿರಿ!’ ಎಂದು ಹೇಳಿಬಿಡುವೆನು.</verse>
				<verse number="24">“ಆದ್ದರಿಂದ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವ ಪ್ರತಿಯೊಬ್ಬನೂ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಸಮಾನ.</verse>
				<verse number="25">ಮಳೆಯು ಸುರಿದು ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಆ ಮನೆ ಬೀಳಲಿಲ್ಲ. ಏಕೆಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಕಟ್ಟಲಾಗಿತ್ತು.</verse>
				<verse number="26">ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ, ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಸಮಾನ.</verse>
				<verse number="27">ಮಳೆಯು ಸುರಿದು, ಹಳ್ಳಗಳು ಬಂದವು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆಗ ಆ ಮನೆ ಕುಸಿದು ಬಿತ್ತು. ಅದರ ಬೀಳುವಿಕೆಯು ಭಯಂಕರವಾಗಿತ್ತು,” ಎಂದರು.</verse>
				<verse number="28">ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ, ಅವರ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು.</verse>
				<verse number="29">ಏಕೆಂದರೆ, ಯೇಸು ಅವರ ನಿಯಮ ಬೋಧಕರಂತೆ ಬೋಧಿಸದೆ, ಅಧಿಕಾರವಿದ್ದವರಂತೆ ಬೋಧಿಸುತ್ತಿದ್ದರು.</verse>
			</chapter>
			<chapter number="8">
				<verse number="1">ಯೇಸು ಪರ್ವತವನ್ನು ಇಳಿದು ಬಂದಾಗ, ಜನರು ದೊಡ್ಡ ಸಮೂಹವಾಗಿ ಅವರನ್ನು ಹಿಂಬಾಲಿಸಿದರು.</verse>
				<verse number="2">ಅಲ್ಲಿಗೆ ಕುಷ್ಠರೋಗಿಯಾಗಿದ್ದ ಒಬ್ಬನು ಬಂದು, ಯೇಸುವಿನ ಮುಂದೆ ಮೊಣಕಾಲೂರಿ, “ಕರ್ತನೇ, ನೀವು ಮನಸ್ಸು ಮಾಡಿದರೆ, ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದನು.</verse>
				<verse number="3">ಆಗ ಯೇಸು ಕೈಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸಿದೆ, ನೀನು ಶುದ್ಧನಾಗು,” ಎಂದರು. ತಕ್ಷಣವೇ ಅವನ ಕುಷ್ಠವು ಹೋಗಿ ಅವನು ಶುದ್ಧನಾದನು.</verse>
				<verse number="4">ಆಗ ಯೇಸು ಅವನಿಗೆ, “ನೋಡು ಇದನ್ನು ನೀನು ಯಾರಿಗೂ ಹೇಳಬೇಡ, ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ಜನರಿಗೆ ಸಾಕ್ಷಿಯಾಗಿರುವಂತೆ ಮೋಶೆಯು ಆಜ್ಞಾಪಿಸಿದ ಕಾಣಿಕೆಯನ್ನು ಅರ್ಪಿಸು,” ಎಂದು ಹೇಳಿದರು.</verse>
				<verse number="5">ಯೇಸು ಕಪೆರ್ನೌಮಿಗೆ ಪ್ರವೇಶಿಸಿದಾಗ, ಒಬ್ಬ ಶತಾಧಿಪತಿಯು ಅವರ ಬಳಿಗೆ ಬಂದು,</verse>
				<verse number="6">“ಸ್ವಾಮೀ, ನನ್ನ ಸೇವಕನು ಪಾರ್ಶ್ವವಾಯು ರೋಗದಿಂದ ಘೋರವಾಗಿ ನರಳುತ್ತಾ ಮನೆಯಲ್ಲಿ ಹಾಸಿಗೆ ಹಿಡಿದಿದ್ದಾನೆ,” ಎಂದು ಹೇಳಿಕೊಂಡನು.</verse>
				<verse number="7">ಯೇಸು ಅವನಿಗೆ, “ನಾನು ಬಂದು ಅವನನ್ನು ಸ್ವಸ್ಥಮಾಡುತ್ತೇನೆ,” ಎಂದರು.</verse>
				<verse number="8">ಅದಕ್ಕೆ ಶತಾಧಿಪತಿಯು, “ಸ್ವಾಮೀ, ನನ್ನ ಮನೆಯೊಳಗೆ ನೀವು ಬರುವಷ್ಟು ಯೋಗ್ಯತೆ ನನಗಿಲ್ಲ. ಆದರೆ, ನೀವು ಒಂದು ಮಾತು ಮಾತ್ರ ಹೇಳಿರಿ, ಆಗ ನನ್ನ ಸೇವಕ ಗುಣಹೊಂದುವನು.</verse>
				<verse number="9">ಏಕೆಂದರೆ ನಾನು ಸಹ ಮತ್ತೊಬ್ಬ ಅಧಿಕಾರಿಯ ಕೈಕೆಳಗಿರುವವನು, ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ, ‘ಹೋಗು’ ಎಂದರೆ ಅವನು ಹೋಗುತ್ತಾನೆ. ಮತ್ತೊಬ್ಬನಿಗೆ, ‘ಬಾ’ ಎಂದರೆ ಅವನು ಬರುತ್ತಾನೆ. ನನ್ನ ಸೇವಕನಿಗೆ, ‘ಇದನ್ನು ಮಾಡು,’ ಎಂದರೆ ಅವನು ಮಾಡುತ್ತಾನೆ,” ಎಂದು ಹೇಳಿದನು.</verse>
				<verse number="10">ಯೇಸು ಇದನ್ನು ಕೇಳಿ, ಆಶ್ಚರ್ಯಪಟ್ಟು ತಮ್ಮ ಹಿಂದೆ ಬರುತ್ತಿದ್ದವರಿಗೆ, “ಇಂಥ ಮಹಾ ನಂಬಿಕೆಯನ್ನು ನಾನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.</verse>
				<verse number="11">ಅನೇಕರು ಪೂರ್ವದಿಂದಲೂ ಪಶ್ಚಿಮದಿಂದಲೂ ಬಂದು, ಪರಲೋಕ ರಾಜ್ಯದಲ್ಲಿ ಅಬ್ರಹಾಮ್, ಇಸಾಕ್, ಯಾಕೋಬರೊಂದಿಗೆ ಹಬ್ಬದ ಔತಣಕ್ಕೆ ಕುಳಿತುಕೊಳ್ಳುವರು.</verse>
				<verse number="12">ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ದಬ್ಬಲಾಗುವರು, ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು ಎಂದು ನಿಮಗೆ ಹೇಳುತ್ತೇನೆ,” ಎಂದರು.</verse>
				<verse number="13">ಅನಂತರ ಯೇಸು ಆ ಶತಾಧಿಪತಿಗೆ, “ಹೋಗು, ನೀನು ನಂಬಿದಂತೆಯೇ ನಿನಗಾಗಲಿ,” ಎಂದು ಹೇಳಿದರು. ಅವನ ಸೇವಕನು ಅದೇ ಗಳಿಗೆಯಲ್ಲಿ ಸ್ವಸ್ಥನಾದನು.</verse>
				<verse number="14">ತರುವಾಯ ಯೇಸು ಪೇತ್ರನ ಮನೆಗೆ ಬಂದು, ಅವನ ಅತ್ತೆ ಜ್ವರದಿಂದ ಮಲಗಿರುವುದನ್ನು ಕಂಡರು.</verse>
				<verse number="15">ಯೇಸು ಆಕೆಯ ಕೈಯನ್ನು ಮುಟ್ಟಿದಾಗ ಜ್ವರವು ಆಕೆಯನ್ನು ಬಿಟ್ಟುಹೋಯಿತು. ಆಕೆಯು ಎದ್ದು ಅವರನ್ನು ಉಪಚರಿಸಿದಳು.</verse>
				<verse number="16">ಸಂಜೆಯಾದಾಗ, ದೆವ್ವಹಿಡಿದ ಅನೇಕರನ್ನು ಜನರು ಯೇಸುವಿನ ಬಳಿಗೆ ಕರೆತಂದರು. ಯೇಸು ಮಾತಿನಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ, ಎಲ್ಲಾ ರೋಗಪೀಡಿತರನ್ನೂ ಸ್ವಸ್ಥಪಡಿಸಿದರು.</verse>
				<verse number="17">ಹೀಗೆ, “ಅವರು ತಾವೇ ನಮ್ಮ ಬಲಹೀನತೆಗಳನ್ನು ತೆಗೆದುಕೊಂಡು, ನಮ್ಮ ರೋಗಗಳನ್ನು ಹೊತ್ತುಕೊಂಡರು,” ಎಂದು ಯೆಶಾಯ ಪ್ರವಾದಿಯು ಹೇಳಿದ್ದು ನೆರವೇರಿತು.</verse>
				<verse number="18">ಯೇಸು ತಮ್ಮ ಸುತ್ತಲಿದ್ದ ಜನರ ದೊಡ್ಡ ಸಮೂಹವನ್ನು ಕಂಡು, ಆಚೆದಡಕ್ಕೆ ಹೋಗಲು ಅಪ್ಪಣೆಕೊಟ್ಟರು.</verse>
				<verse number="19">ಆಗ ಒಬ್ಬ ನಿಯಮ ಬೋಧಕ ಬಂದು ಯೇಸುವಿಗೆ, “ಬೋಧಕರೇ, ನೀವು ಎಲ್ಲಿಗೆ ಹೋದರೂ ನಾನು ನಿಮ್ಮನ್ನು ಹಿಂಬಾಲಿಸುವೆನು,” ಎಂದನು.</verse>
				<verse number="20">ಅದಕ್ಕೆ ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ, ಆದರೆ ಮನುಷ್ಯಪುತ್ರನಾದ ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ,” ಎಂದರು.</verse>
				<verse number="21">ಮತ್ತೊಬ್ಬ ಶಿಷ್ಯನು ಅವರಿಗೆ, “ಕರ್ತದೇವರೇ, ಮೊದಲು ನಾನು ಹೋಗಿ ನನ್ನ ತಂದೆಯ ಶವಸಂಸ್ಕಾರ ಮಾಡಿಬರಲು ಅನುಮತಿಕೊಡಿರಿ,” ಎಂದನು.</verse>
				<verse number="22">ಆದರೆ ಯೇಸು ಅವನಿಗೆ, “ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರನ್ನು ಸಮಾಧಿ ಮಾಡಿಕೊಳ್ಳಲಿ,” ಎಂದು ಹೇಳಿದರು.</verse>
				<verse number="23">ಯೇಸುವು ದೋಣಿಯನ್ನು ಹತ್ತಲು, ಶಿಷ್ಯರು ಸಹ ಅವರ ಸಂಗಡ ಹೋದರು.</verse>
				<verse number="24">ಇದ್ದಕ್ಕಿದ್ದ ಹಾಗೆ, ಸರೋವರದಲ್ಲಿ ದೊಡ್ಡ ಬಿರುಗಾಳಿ ಎದ್ದ ಕಾರಣ ದೋಣಿಯು ಅಲೆಗಳಿಂದ ಮುಚ್ಚುತ್ತಿತ್ತು. ಆದರೆ ಯೇಸು ನಿದ್ರಿಸುತ್ತಿದ್ದರು.</verse>
				<verse number="25">ಆಗ ಶಿಷ್ಯರು ಯೇಸುವಿನ ಬಳಿ ಬಂದು ಅವರನ್ನು ಎಬ್ಬಿಸಿ, “ಕರ್ತನೇ, ಕಾಪಾಡು! ನಾವು ಮುಳುಗುತ್ತಿದ್ದೇವೆ!” ಎಂದರು.</verse>
				<verse number="26">ಆಗ ಯೇಸು ಅವರಿಗೆ, “ಅಲ್ಪವಿಶ್ವಾಸವುಳ್ಳವರೇ, ನೀವು ಏಕೆ ಭಯಪಡುತ್ತೀರಿ?” ಎಂದು ಹೇಳಿ, ಎದ್ದು ಬಿರುಗಾಳಿಯನ್ನೂ ಸರೋವರವನ್ನೂ ಗದರಿಸಿದರು. ಆಗ ಎಲ್ಲವೂ ಪ್ರಶಾಂತವಾಯಿತು.</verse>
				<verse number="27">ಆದರೆ ಶಿಷ್ಯರು ಆಶ್ಚರ್ಯದಿಂದ, “ಇವರು ಎಂಥಾ ಮನುಷ್ಯನಾಗಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದರು.</verse>
				<verse number="28">ಯೇಸು ಆಚೆಯ ಕಡೆಯಲ್ಲಿದ್ದ ಗದರೇನರ ಪ್ರಾಂತಕ್ಕೆ ಬಂದಾಗ, ದೆವ್ವ ಹಿಡಿದಿದ್ದ ಇಬ್ಬರು ಸಮಾಧಿಯ ಗುಹೆಗಳಿಂದ ಬಂದು ಯೇಸುವಿಗೆ ಎದುರಾದರು. ಅವರು ಬಹು ಕ್ರೂರಿಗಳಾಗಿದ್ದುದರಿಂದ ಯಾರೂ ಆ ಮಾರ್ಗವಾಗಿ ಹೋಗಲಾಗುತ್ತಿರಲಿಲ್ಲ.</verse>
				<verse number="29">ಆಗ ಅವರು, “ದೇವಪುತ್ರನೇ, ನಮ್ಮ ಗೊಡವೆ ನಿಮಗೆ ಏಕೆ? ಸಮಯಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಇಲ್ಲಿಗೆ ಬಂದೆಯಾ?” ಎಂದು ಕೂಗಿ ಹೇಳಿದರು.</verse>
				<verse number="30">ಆಗ ಅವರಿಂದ ಸ್ವಲ್ಪ ದೂರದಲ್ಲಿ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು.</verse>
				<verse number="31">“ನೀನು ನಮ್ಮನ್ನು ಹೊರಗೆ ಹಾಕುವುದಾದರೆ ಆ ಹಂದಿಗಳ ಹಿಂಡಿಗೆ ನಮ್ಮನ್ನು ಕಳುಹಿಸಿಕೊಡಿ,” ಎಂದು ದೆವ್ವಗಳು ಯೇಸುವನ್ನು ಬೇಡಿಕೊಂಡವು.</verse>
				<verse number="32">ಯೇಸು ಅವುಗಳಿಗೆ, “ಹೋಗಿರಿ,” ಎಂದರು. ಆಗ ಅವು ಹೊರಗೆ ಬಂದು ಹಂದಿಗಳ ಹಿಂಡನ್ನು ಹೊಕ್ಕವು. ಆಗ ಆ ಹಿಂಡೆಲ್ಲಾ ಕಡಿದಾದ ಬದಿಯಿಂದ ಓಡಿಹೋಗಿ ಸರೋವರದೊಳಗೆ ಬಿದ್ದು ಸತ್ತು ಹೋದವು.</verse>
				<verse number="33">ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ, ಪಟ್ಟಣದೊಳಕ್ಕೆ ಹೋಗಿ ದೆವ್ವ ಹಿಡಿದಿದ್ದವರಿಗೆ ಸಂಭವಿಸಿದ್ದನ್ನು ವರದಿಮಾಡಿದರು.</verse>
				<verse number="34">ಆಗ ಪಟ್ಟಣದವರೆಲ್ಲರೂ ಯೇಸುವನ್ನು ಕಾಣುವುದಕ್ಕೆ ಹೊರಗೆ ಬಂದರು. ಅವರು ಯೇಸುವನ್ನು ಕಂಡು, ತಮ್ಮ ಪ್ರಾಂತವನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.</verse>
			</chapter>
			<chapter number="9">
				<verse number="1">ಯೇಸು ದೋಣಿ ಹತ್ತಿ, ಸರೋವರವನ್ನು ದಾಟಿ ತಮ್ಮ ಸ್ವಂತ ಪಟ್ಟಣಕ್ಕೆ ಬಂದರು.</verse>
				<verse number="2">ಆಗ ಹಾಸಿಗೆಯ ಮೇಲೆ ಮಲಗಿದ್ದ, ಒಬ್ಬ ಪಾರ್ಶ್ವವಾಯು ರೋಗಿಯನ್ನು ಜನರು ಯೇಸುವಿನ ಬಳಿಗೆ ತಂದರು. ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ಧೈರ್ಯವಾಗಿರು. ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.</verse>
				<verse number="3">ಆಗ ನಿಯಮ ಬೋಧಕರಲ್ಲಿ ಕೆಲವರು, “ಈತನು ದೇವದೂಷಣೆ ಮಾಡುತ್ತಿದ್ದಾನೆ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.</verse>
				<verse number="4">ಯೇಸು ಅವರ ಆಲೋಚನೆಗಳನ್ನು ತಿಳಿದುಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಕೆಟ್ಟದ್ದನ್ನು ಯೋಚಿಸುವುದೇಕೆ?</verse>
				<verse number="5">ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ ‘ಎದ್ದು ನಡೆ,’ ಎನ್ನುವುದೋ?</verse>
				<verse number="6">ಆದರೆ ಮನುಷ್ಯಪುತ್ರನಾದ ನನಗೆ ಈ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.</verse>
				<verse number="7">ಆಗ ಅವನು ಎದ್ದು ತನ್ನ ಮನೆಗೆ ಹೊರಟುಹೋದನು.</verse>
				<verse number="8">ಜನರ ಗುಂಪು ಇದನ್ನು ಕಂಡು ಬೆರಗಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು.</verse>
				<verse number="9">ಯೇಸು ಅಲ್ಲಿಂದ ಹಾದುಹೋಗುತ್ತಿದ್ದಾಗ, ಮತ್ತಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಸುಂಕದ ಕಟ್ಟೆಯಲ್ಲಿ ಕೂತಿರುವುದನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು. ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.</verse>
				<verse number="10">ಇದಾದ ಮೇಲೆ ಯೇಸು ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಬಹುಮಂದಿ ಸುಂಕದವರೂ ಅಪಖ್ಯಾತಿಯ ಪಾಪಿಗಳೂ ಬಂದು ಯೇಸುವಿನೊಂದಿಗೂ ಅವರ ಶಿಷ್ಯರೊಂದಿಗೂ ಕುಳಿತುಕೊಂಡರು.</verse>
				<verse number="11">ಫರಿಸಾಯರು ಇದನ್ನು ಕಂಡು, “ನಿಮ್ಮ ಬೋಧಕನು ಸುಂಕದವರ ಮತ್ತು ಅಪಖ್ಯಾತಿಯ ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಯೇಸುವಿನ ಶಿಷ್ಯರನ್ನು ಕೇಳಿದರು.</verse>
				<verse number="12">ಆದರೆ ಯೇಸು ಇದನ್ನು ಕೇಳಿ ಅವರಿಗೆ, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ.</verse>
				<verse number="13">ಆದರೆ ನೀವು ಹೋಗಿ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ,’ ಎಂಬುದರ ಅರ್ಥವನ್ನು ಕಲಿತುಕೊಳ್ಳಿರಿ. ಏಕೆಂದರೆ ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.</verse>
				<verse number="14">ಬಳಿಕ ಯೋಹಾನನ ಶಿಷ್ಯರು ಯೇಸುವಿನ ಬಳಿಗೆ ಬಂದು, “ನಾವೂ, ಫರಿಸಾಯರೂ ಉಪವಾಸ ಮಾಡುತ್ತೇವೆ. ಆದರೆ ನಿಮ್ಮ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು.</verse>
				<verse number="15">ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ದುಃಖಪಡುವುದುಂಟೇ? ಆದರೆ ಮದುಮಗನು ಅಗಲಬೇಕಾಗುವ ದಿವಸಗಳು ಬರುತ್ತವೆ; ಆಗ ಅವರು ಉಪವಾಸ ಮಾಡುವರು.</verse>
				<verse number="16">“ಯಾರೂ ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತೇಪೆಯನ್ನು ಹಾಕುವುದಿಲ್ಲ. ಏಕೆಂದರೆ ಅದು ಆ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು.</verse>
				<verse number="17">ಅಂತೆಯೇ ಜನರು ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ಅವರು ಹಾಗೇನಾದರೂ ಮಾಡಿದರೆ ಚರ್ಮದ ಚೀಲಗಳು ಹರಿದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ. ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ತುಂಬಿಡುತ್ತಾರೆ. ಆಗ ಅವೆರಡೂ ಉಳಿಯುತ್ತವೆ,” ಎಂದರು.</verse>
				<verse number="18">ಯೇಸು ಇದೆಲ್ಲವನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ, ಸಭಾಮಂದಿರದ ಒಬ್ಬ ಅಧಿಕಾರಿಯು ಬಂದು ಯೇಸುವಿನ ಮುಂದೆ ಮೊಣಕಾಲೂರಿ, “ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ನೀವು ಬಂದು ಆಕೆಯ ಮೇಲೆ ನಿಮ್ಮ ಕೈಯನ್ನಿಡಿರಿ; ಆಗ ಅವಳು ಬದುಕುವಳು,” ಎಂದು ಹೇಳಿದನು.</verse>
				<verse number="19">ಯೇಸು ಎದ್ದು ತಮ್ಮ ಶಿಷ್ಯರೊಂದಿಗೆ ಆ ಅಧಿಕಾರಿಯ ಹಿಂದೆ ಹೋದರು.</verse>
				<verse number="20">ಆಗ ಅಲ್ಲಿ ಹನ್ನೆರಡು ವರ್ಷಗಳಿಂದ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀಯು ಹಿಂಬದಿಯಿಂದ ಬಂದು, ಯೇಸುವಿನ ನಿಲುವಂಗಿಯ ಅಂಚನ್ನು ಮುಟ್ಟಿ,</verse>
				<verse number="21">“ನಾನು ಯೇಸುವಿನ ಉಡುಪನ್ನು ಮುಟ್ಟಿದರೆ ಸಾಕು, ನನಗೆ ಗುಣವಾಗುವುದು,” ಎಂದು ಆಕೆಯು ತನ್ನೊಳಗೆ ಹೇಳಿಕೊಂಡಳು.</verse>
				<verse number="22">ಯೇಸು ಹಿಂತಿರುಗಿ ಆಕೆಯನ್ನು ನೋಡಿ, “ಮಗಳೇ, ಧೈರ್ಯವಾಗಿರು; ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಗಳಿಗೆಯಲ್ಲೇ ಆ ಸ್ತ್ರೀಯು ಸ್ವಸ್ಥಳಾದಳು.</verse>
				<verse number="23">ತರುವಾಯ ಯೇಸು ಆ ಅಧಿಕಾರಿಯ ಮನೆಯೊಳಗೆ ಬಂದು ಕೊಳಲೂದುವವರನ್ನೂ ಜನರ ಗೊಂದಲವನ್ನೂ ಕಂಡು,</verse>
				<verse number="24">ಅವರಿಗೆ, “ಹೊರಗೆ ಹೋಗಿರಿ, ಬಾಲಕಿಯು ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು. ಅದಕ್ಕವರು ನಕ್ಕು ಯೇಸುವನ್ನು ಹಾಸ್ಯಮಾಡಿದರು.</verse>
				<verse number="25">ಆದರೆ ಜನರನ್ನು ಹೊರಗೆ ಕಳುಹಿಸಿದ ಮೇಲೆ ಯೇಸು ಒಳಗೆ ಹೋಗಿ, ಬಾಲಕಿಯ ಕೈಯನ್ನು ಹಿಡಿದು ಎಬ್ಬಿಸಿದಾಗ ಬಾಲಕಿಯು ಎದ್ದಳು.</verse>
				<verse number="26">ಈ ಸಮಾಚಾರವು ನಾಡಿನಲ್ಲೆಲ್ಲಾ ಹರಡಿತು.</verse>
				<verse number="27">ಯೇಸು ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು,” ಎಂದು ಮೊರೆಯಿಡುತ್ತಾ ಯೇಸುವಿನ ಹಿಂದೆ ಹೋದರು.</verse>
				<verse number="28">ಯೇಸು ಮನೆಗೆ ಬಂದಾಗ, ಆ ಕುರುಡರು ಅವರ ಬಳಿಗೆ ಬಂದರು. ಆಗ ಯೇಸು ಅವರಿಗೆ, “ನಾನು ಇದನ್ನು ಮಾಡಲು ಶಕ್ತನೆಂದು ನೀವು ನಂಬುತ್ತೀರೋ?” ಎಂದು ಕೇಳಿದರು. ಅದಕ್ಕವರು ಯೇಸುವಿಗೆ, “ಹೌದು ಕರ್ತನೆ,” ಎಂದರು.</verse>
				<verse number="29">ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, “ನಿಮ್ಮ ನಂಬಿಕೆಯಂತೆ ನಿಮಗಾಗಲಿ,” ಎಂದು ಹೇಳಿದರು.</verse>
				<verse number="30">ಆಗ ಅವರಿಗೆ ದೃಷ್ಟಿ ಬಂದಿತು. ಯೇಸು ಅವರಿಗೆ, “ಇದು ಯಾರಿಗೂ ತಿಳಿಯಬಾರದು,” ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದರು.</verse>
				<verse number="31">ಆದರೆ ಸ್ವಸ್ಥರಾದವರು ಹೊರಟುಹೋಗಿ, ಆ ನಾಡಿನಲ್ಲೆಲ್ಲಾ ಯೇಸುವಿನ ಕೀರ್ತಿಯನ್ನು ಹರಡಿದರು.</verse>
				<verse number="32">ಯೇಸು ಮತ್ತು ಶಿಷ್ಯರು ಹೊರಟು ಹೋಗುತ್ತಿದ್ದಾಗ, ದೆವ್ವ ಹಿಡಿದಿದ್ದ ಒಬ್ಬ ಮೂಕನನ್ನು ಕೆಲವರು ಯೇಸುವಿನ ಬಳಿಗೆ ತಂದರು.</verse>
				<verse number="33">ದೆವ್ವ ಬಿಡಿಸಿದ ಮೇಲೆ, ಆ ಮೂಕನು ಮಾತನಾಡಿದನು. ಜನರು ಆಶ್ಚರ್ಯಪಟ್ಟು, “ಇಂಥದ್ದನ್ನು ಎಂದೂ ಇಸ್ರಾಯೇಲಿನಲ್ಲಿ ಕಂಡಿಲ್ಲ,” ಎಂದು ಹೇಳಿದರು.</verse>
				<verse number="34">ಆದರೆ ಫರಿಸಾಯರು, “ದೆವ್ವಗಳ ಅಧಿಪತಿಯಿಂದಲೇ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು.</verse>
				<verse number="35">ಯೇಸು ಎಲ್ಲಾ ಹಳ್ಳಿಗಳಲ್ಲಿಯೂ ಪಟ್ಟಣಗಳಲ್ಲಿಯೂ ಇದ್ದ ಸಭಾಮಂದಿರಗಳಲ್ಲಿ ಬೋಧಿಸುತ್ತಾ, ರಾಜ್ಯದ ಸುವಾರ್ತೆಯನ್ನು ಸಾರುತ್ತಾ, ಜನರ ಪ್ರತಿಯೊಂದು ವ್ಯಾಧಿಯನ್ನೂ ರೋಗವನ್ನೂ ಗುಣಪಡಿಸುತ್ತಾ ಸಂಚರಿಸಿದರು.</verse>
				<verse number="36">ಜನಸಮೂಹವೂ ಕುರುಬನಿಲ್ಲದ ಕುರಿಗಳಂತೆ ಅಲೆಯುವವರಾಗಿಯೂ ನಿಸ್ಸಹಾಯಕರಾಗಿಯೂ ಇರುವುದನ್ನು ಕಂಡು ಯೇಸು ಅವರ ಮೇಲೆ ಕನಿಕರಪಟ್ಟರು.</verse>
				<verse number="37">ಆಗ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಬಹಳವಾಗಿದೆ, ಕೆಲಸದವರೋ ಕೆಲವರು.</verse>
				<verse number="38">ಆದ್ದರಿಂದ, ಬೆಳೆಯ ಯಜಮಾನನನ್ನು ತನ್ನ ಬೆಳೆಗೆ ತಕ್ಕಷ್ಟು ಕೆಲಸದವರನ್ನು ಕಳುಹಿಸುವಂತೆ, ನೀವು ಬೇಡಿಕೊಳ್ಳಿರಿ,” ಎಂದರು.</verse>
			</chapter>
			<chapter number="10">
				<verse number="1">ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ತಮ್ಮ ಬಳಿಗೆ ಕರೆದು, ಅಶುದ್ಧಾತ್ಮಗಳನ್ನು ಓಡಿಸುವುದಕ್ಕೂ ಎಲ್ಲಾ ತರವಾದ ವ್ಯಾಧಿಯನ್ನೂ ರೋಗವನ್ನೂ ಸ್ವಸ್ಥಮಾಡುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು.</verse>
				<verse number="2">ಆ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಹೀಗಿದ್ದವು: ಮೊದಲನೆಯವನು, ಪೇತ್ರ ಎಂದು ಎನಿಸಿಕೊಂಡ ಸೀಮೋನ, ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಾಕೋಬ ಮತ್ತು ಅವನ ಸಹೋದರ ಯೋಹಾನ;</verse>
				<verse number="3">ಫಿಲಿಪ್ಪ, ಬಾರ್ತೊಲೊಮಾಯ; ತೋಮ, ಸುಂಕದವನಾದ ಮತ್ತಾಯ; ಅಲ್ಫಾಯನ ಮಗ ಯಾಕೋಬ, ತದ್ದಾಯ;</verse>
				<verse number="4">ಕಾನಾನ್ಯನಾದ ಸೀಮೋನ ಮತ್ತು ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ.</verse>
				<verse number="5">ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿಸುವಾಗ ಅವರಿಗೆ ಅಪ್ಪಣೆ ಕೊಟ್ಟಿದ್ದೇನೆಂದರೆ: “ಯೆಹೂದ್ಯರಲ್ಲದವರ ಬಳಿಗೆ ಹೋಗಬೇಡಿರಿ, ಸಮಾರ್ಯರ ಊರನ್ನೂ ಪ್ರವೇಶಿಸಬೇಡಿರಿ.</verse>
				<verse number="6">ಆದರೆ ತಪ್ಪಿಹೋದ ಕುರಿಗಳಾದ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ.</verse>
				<verse number="7">ನೀವು ಹೋಗುತ್ತಾ, ‘ಪರಲೋಕ ರಾಜ್ಯವು ಸಮೀಪವಾಯಿತು,’ ಎಂದು ಸಾರಿ ಹೇಳಿರಿ.</verse>
				<verse number="8">ರೋಗಿಗಳನ್ನು ಸ್ವಸ್ಥಮಾಡಿರಿ, ಮರಣಹೊಂದಿದವರನ್ನು ಎಬ್ಬಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ. ನೀವು ಉಚಿತವಾಗಿ ಪಡೆದಿದ್ದೀರಿ; ಉಚಿತವಾಗಿ ಕೊಡಿರಿ.</verse>
				<verse number="9">“ನಿಮ್ಮ ನಡುಕಟ್ಟುಗಳಲ್ಲಿ ಬಂಗಾರ, ಬೆಳ್ಳಿ ಮತ್ತು ತಾಮ್ರದ ನಾಣ್ಯಗಳನ್ನು ಇಟ್ಟುಕೊಳ್ಳಬೇಡಿರಿ.</verse>
				<verse number="10">ಪ್ರಯಾಣಕ್ಕೆ ಚೀಲವನ್ನಾಗಲಿ, ಎರಡು ಅಂಗಿಗಳನ್ನಾಗಲಿ, ಪಾದರಕ್ಷೆಗಳನ್ನಾಗಲಿ, ಕೋಲುಗಳನ್ನಾಗಲಿ ತೆಗೆದುಕೊಳ್ಳಬೇಡಿರಿ. ಏಕೆಂದರೆ ಕೆಲಸದವನು ತನ್ನ ಜೀವನಾಧಾರಕ್ಕೆ ಅರ್ಹನು.</verse>
				<verse number="11">ನೀವು ಯಾವುದಾದರೂ ಒಂದು ಪಟ್ಟಣವನ್ನು, ಇಲ್ಲವೆ ಹಳ್ಳಿಯನ್ನು ಪ್ರವೇಶಿಸುವಾಗ, ಅದರಲ್ಲಿ ಯೋಗ್ಯ ವ್ಯಕ್ತಿ ಯಾರೆಂದು ವಿಚಾರಿಸಿರಿ, ಅಲ್ಲಿಂದ ಹೊರಡುವವರೆಗೆ ಅಲ್ಲಿಯೇ ತಂಗಿರಿ.</verse>
				<verse number="12">ನೀವು ಒಂದು ಮನೆಯೊಳಗೆ ಪ್ರವೇಶಿಸಿದಾಗ, ಆ ಮನೆಯವರನ್ನು ಹರಸಿರಿ.</verse>
				<verse number="13">ಆ ಮನೆಯು ಅಯೋಗ್ಯವಾಗಿದ್ದರೆ, ನಿಮ್ಮ ಸಮಾಧಾನವು ನಿಮಗೆ ಹಿಂದಿರುಗಲಿ.</verse>
				<verse number="14">ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ, ನೀವು ಆ ಮನೆಯನ್ನು ಇಲ್ಲವೆ ಆ ಪಟ್ಟಣವನ್ನು ಬಿಟ್ಟು ಹೊರಡುವಾಗ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.</verse>
				<verse number="15">ನ್ಯಾಯತೀರ್ಪಿನ ದಿನದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಗತಿಯು ಆ ಪಟ್ಟಣಕ್ಕಿಂತ ಹೆಚ್ಚು ತಾಳುವಂಥದ್ದಾಗಿರುವುದು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.</verse>
				<verse number="16">“ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.</verse>
				<verse number="17">ಆದರೆ ಜನರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಏಕೆಂದರೆ ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯುವರು.</verse>
				<verse number="18">ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರ ಮುಂದೆ ಒಯ್ಯುವರು. ಹೀಗೆ ಅವರಿಗೂ ಯೆಹೂದ್ಯರಲ್ಲದವರಿಗೂ ನೀವು ಸಾಕ್ಷಿಗಳಾಗುವಿರಿ.</verse>
				<verse number="19">ಆದರೆ ಅವರು ನಿಮ್ಮನ್ನು ಬಂಧಿಸುವಾಗ, ನೀವು ಹೇಗೆ ಇಲ್ಲವೆ ಏನು ಮಾತನಾಡಬೇಕೆಂದು ಯೋಚಿಸಬೇಡಿರಿ. ನೀವು ಏನು ಮಾತನಾಡಬೇಕೆಂಬುದು ಆ ಗಳಿಗೆಯಲ್ಲೇ ನಿಮಗೆ ತಿಳಿಸಲಾಗುವುದು,</verse>
				<verse number="20">ಏಕೆಂದರೆ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮೊಳಗಿಂದ ಮಾತನಾಡುವರು.</verse>
				<verse number="21">“ಸಹೋದರನು ತನ್ನ ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.</verse>
				<verse number="22">ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಮಾಡುವರು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.</verse>
				<verse number="23">ಒಂದು ಸ್ಥಳದಲ್ಲಿ ನಿಮಗೆ ಹಿಂಸೆಯಾದರೆ ಇನ್ನೊಂದು ಸ್ಥಳಕ್ಕೆ ಓಡಿಹೋಗಿರಿ. ಮನುಷ್ಯಪುತ್ರನು ಬರುವಷ್ಟರಲ್ಲಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.</verse>
				<verse number="24">“ತನ್ನ ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ದಾಸನು ತನ್ನ ಯಜಮಾನನಿಗಿಂತ ಶ್ರೇಷ್ಠನಲ್ಲ.</verse>
				<verse number="25">ಶಿಷ್ಯನು ತನ್ನ ಗುರುವಿನಂತೆಯೂ ದಾಸನು ತನ್ನ ಯಜಮಾನನಂತೆಯೂ ಇದ್ದರೆ ಸಾಕು. ಮನೆಯ ಯಜಮಾನನನ್ನೇ ಅವರು, ‘ಬೆಲ್ಜೆಬೂಲನು’ ಎಂದು ಕರೆದರೆ, ಯಜಮಾನನ ಮನೆಯವರನ್ನು ಇನ್ನೂ ಎಷ್ಟೋ ಕೆಟ್ಟದ್ದಾಗಿ ಕರೆಯುವರಲ್ಲವೇ!</verse>
				<verse number="26">“ಆದ್ದರಿಂದ ಅವರಿಗೆ ಹೆದರಬೇಡಿರಿ, ಪ್ರಕಟಗೊಳ್ಳದಂತೆ ಯಾವುದೂ ಮುಚ್ಚಿಡಲಾಗುವುದಿಲ್ಲ, ತಿಳಿಯಲಾಗದಂತೆ ಯಾವುದೂ ಗುಪ್ತವಾಗಿರುವುದಿಲ್ಲ.</verse>
				<verse number="27">ನಾನು ನಿಮಗೆ ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ. ನೀವು ಕಿವಿಯಲ್ಲಿ ಕೇಳುವುದನ್ನು ಮಾಳಿಗೆಯ ಮೇಲೆ ಸಾರಿರಿ.</verse>
				<verse number="28">ದೇಹವನ್ನು ಕೊಂದು ಆತ್ಮವನ್ನು ಕೊಲ್ಲಲಾಗದವರಿಗೆ ಹೆದರಬೇಡಿರಿ. ಆದರೆ ಆತ್ಮ ಮತ್ತು ದೇಹ ಎರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿರಿ.</verse>
				<verse number="29">ಒಂದು ರೂಪಾಯಿಗೆ ಎರಡು ಗುಬ್ಬಿಗಳನ್ನು ಮಾರುವುದಿಲ್ಲವೇ? ಆದರೂ ನಿಮ್ಮ ತಂದೆಯ ಚಿತ್ತವಿಲ್ಲದೆ ಅವುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ.</verse>
				<verse number="30">ನಿಮ್ಮ ತಲೆಯ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ.</verse>
				<verse number="31">ಆದ್ದರಿಂದ ಭಯಪಡಬೇಡಿರಿ; ಅನೇಕ ಗುಬ್ಬಿಗಳಿಗಿಂತಲೂ ನೀವು ಎಷ್ಟೋ ಮೌಲ್ಯವುಳ್ಳವರು.</verse>
				<verse number="32">“ಜನರ ಮುಂದೆ ನನ್ನನ್ನು ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು, ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಒಪ್ಪಿಕೊಳ್ಳುವೆನು.</verse>
				<verse number="33">ಯಾವನಾದರೂ ಜನರ ಮುಂದೆ ನನ್ನನ್ನು ನಿರಾಕರಿಸಿದರೆ, ನಾನು ಸಹ ಅವನನ್ನು ಪರಲೋಕದಲ್ಲಿರುವ ನನ್ನ ತಂದೆಯ ಮುಂದೆ ನಿರಾಕರಿಸುವೆನು.</verse>
				<verse number="34">“ನಾನು ಭೂಮಿಯ ಮೇಲೆ ಸಮಾಧಾನವನ್ನು ತರಲು ಬಂದೆನೆಂದು ಭಾವಿಸಬೇಡಿರಿ. ಸಮಾಧಾನವನ್ನಲ್ಲ, ಖಡ್ಗವನ್ನು ತರಲು ಬಂದೆನು.</verse>
				<verse number="35">ಹೇಗೆಂದರೆ, “ ‘ಮಗನಿಗೂ ಅವನ ತಂದೆಗೂ, ಮಗಳಿಗೂ ಆಕೆಯ ತಾಯಿಗೂ, ಸೊಸೆಗೂ ಆಕೆಯ ಅತ್ತೆಗೂ ವಿರೋಧವನ್ನು ಹುಟ್ಟಿಸುವುದಕ್ಕೆ ನಾನು ಬಂದೆನು.</verse>
				<verse number="36">ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.’</verse>
				<verse number="37">“ನನಗಿಂತ ಮೇಲಾಗಿ ತಂದೆಯನ್ನಾಗಲಿ, ತಾಯಿಯನ್ನಾಗಲಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಮಗನನ್ನಾಗಲಿ, ಮಗಳನ್ನಾಗಲಿ ನನಗಿಂತ ಮೇಲಾಗಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.</verse>
				<verse number="38">ತನ್ನ ಶಿಲುಬೆಯನ್ನು ತೆಗೆದುಕೊಂಡು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ.</verse>
				<verse number="39">ತನ್ನ ಪ್ರಾಣವನ್ನು ಕಂಡುಕೊಳ್ಳುವವನು ಅದನ್ನು ಕಳೆದುಕೊಳ್ಳುವನು. ನನ್ನ ನಿಮಿತ್ತವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಂಡುಕೊಳ್ಳುವನು.</verse>
				<verse number="40">“ನಿಮ್ಮನ್ನು ಸ್ವಾಗತಿಸುವವರು ನನ್ನನ್ನು ಸ್ವಾಗತಿಸುತ್ತಾರೆ. ನನ್ನನ್ನು ಸ್ವಾಗತಿಸಿದವರು, ನನ್ನನ್ನು ಕಳುಹಿಸಿದ ತಂದೆಯನ್ನು ಸ್ವಾಗತಿಸುತ್ತಾರೆ.</verse>
				<verse number="41">ಪ್ರವಾದಿಯೆಂದು ಪ್ರವಾದಿಯನ್ನು ಸ್ವಾಗತಿಸುವವರು ಪ್ರವಾದಿಯ ಪ್ರತಿಫಲವನ್ನು ಪಡೆಯುವರು; ನೀತಿವಂತನೆಂದು ನೀತಿವಂತನನ್ನು ಸ್ವಾಗತಿಸುವವರು ನೀತಿವಂತನ ಪ್ರತಿಫಲವನ್ನು ಪಡೆಯುವರು.</verse>
				<verse number="42">ಯಾವನಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ನನ್ನ ಶಿಷ್ಯನೆಂದು ಕೇವಲ ಒಂದು ಲೋಟ ತಣ್ಣೀರನ್ನು ಕುಡಿಯುವುದಕ್ಕೆ ಕೊಡುವವನು ತನ್ನ ಪ್ರತಿಫಲವನ್ನು ಕಳೆದುಕೊಳ್ಳುವುದೇ ಇಲ್ಲವೆಂದು ಸತ್ಯವಾಗಿ ನಾನು ನಿಮಗೆ ಹೇಳುತ್ತೇನೆ.”</verse>
			</chapter>
			<chapter number="11">
				<verse number="1">ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರಿಗೆ ಆದೇಶ ಕೊಟ್ಟಾದ ಮೇಲೆ, ಗಲಿಲಾಯ ಪ್ರದೇಶದ ಪಟ್ಟಣಗಳಲ್ಲಿ ಬೋಧಿಸುವುದಕ್ಕೂ ಶುಭವರ್ತಮಾನವನ್ನು ಸಾರುವುದಕ್ಕೂ ಅಲ್ಲಿಂದ ಹೊರಟು ಹೋದರು.</verse>
				<verse number="2">ಆಗ ಸೆರೆಮನೆಯಲ್ಲಿ ಯೋಹಾನನು ಕ್ರಿಸ್ತನ ಕಾರ್ಯಗಳನ್ನು ಕೇಳಿ, ತನ್ನ ಶಿಷ್ಯರನ್ನು ಕಳುಹಿಸಿ ಯೇಸುವಿಗೆ,</verse>
				<verse number="3">“ಬರಬೇಕಾದ ಮೆಸ್ಸೀಯ ನೀನೋ ಇಲ್ಲವೇ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ?” ಎಂದು ವಿಚಾರಿಸಿದನು.</verse>
				<verse number="4">ಯೇಸು, “ನೀವು ಕೇಳುವುದನ್ನೂ ಕಾಣುವುದನ್ನೂ ಯೋಹಾನನಿಗೆ ಹೋಗಿ ತಿಳಿಸಿರಿ;</verse>
				<verse number="5">ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.</verse>
				<verse number="6">ನನ್ನ ವಿಷಯದಲ್ಲಿ ವಿಶ್ವಾಸ ಕಳೆದುಕೊಳ್ಳದವನೇ ಧನ್ಯನು,” ಎಂದರು.</verse>
				<verse number="7">ಅವರು ಹೊರಟು ಹೋಗುತ್ತಿದ್ದಾಗ, ಯೇಸು ಯೋಹಾನನ ಕುರಿತಾಗಿ ಜನಸಮೂಹಕ್ಕೆ, “ನೀವು ಯಾವುದನ್ನು ಕಾಣುವುದಕ್ಕಾಗಿ ಅರಣ್ಯಕ್ಕೆ ಹೋದಿರಿ? ಗಾಳಿಗೆ ಓಲಾಡುವ ದಂಟನ್ನೋ?</verse>
				<verse number="8">ಇಲ್ಲವಾದರೆ, ನೀವು ಏನನ್ನು ಕಾಣುವುದಕ್ಕಾಗಿ ಹೋದಿರಿ? ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ನಯವಾದ ಉಡುಪನ್ನು ಧರಿಸುವವರು ರಾಜರ ಅರಮನೆಗಳಲ್ಲಿ ಇರುತ್ತಾರೆ.</verse>
				<verse number="9">ಆದರೆ ಏನು ಕಾಣುವುದಕ್ಕಾಗಿ ಹೋದಿರಿ? ಒಬ್ಬ ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ, ಎಂದು ನಾನು ನಿಮಗೆ ಹೇಳುತ್ತೇನೆ.</verse>
				<verse number="10">ಯೋಹಾನನ ಕುರಿತು ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ.’</verse>
				<verse number="11">ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸ್ತ್ರೀಯರಲ್ಲಿ ಹುಟ್ಟಿದವರಲ್ಲಿ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಹುಟ್ಟಲಿಲ್ಲ; ಆದರೂ ಪರಲೋಕ ರಾಜ್ಯದಲ್ಲಿರುವ ಅತ್ಯಂತ ಚಿಕ್ಕವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ.</verse>
				<verse number="12">ಸ್ನಾನಿಕನಾದ ಯೋಹಾನನ ದಿನಗಳಿಂದ ಇದುವರೆಗೆ, ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಒಳಗಾಗಿದೆ, ಬಲಾತ್ಕಾರಿಗಳು ಅದನ್ನು ಬಲವಂತವಾಗಿ ತೆಗೆದುಕೊಳ್ಳುತ್ತಾರೆ.</verse>
				<verse number="13">ಯೋಹಾನನ ಕಾಲದ ತನಕ ಮೋಶೆಯ ನಿಯಮ ಹಾಗು ಎಲ್ಲ ಪ್ರವಾದಿಗಳು ದೇವರ ರಾಜ್ಯವನ್ನು ಕುರಿತು ಪ್ರವಾದನೆ ಮಾಡಿದರು.</verse>
				<verse number="14">ನೀವು ಇದನ್ನು ಸ್ವೀಕರಿಸುವುದಕ್ಕೆ ಮನಸ್ಸಿದ್ದರೆ, ಬರತಕ್ಕ ಎಲೀಯನು ಈ ಯೋಹಾನನೇ.</verse>
				<verse number="15">ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ.</verse>
				<verse number="16">“ಆದರೆ ಈ ಸಂತತಿಯನ್ನು ನಾನು ಯಾವುದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ಇತರರನ್ನು ಕರೆಯುತ್ತಾ:</verse>
				<verse number="17">“ ‘ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ; ನಾವು ಶೋಕಗೀತೆ ಹಾಡಿದೆವು, ನೀವು ಗೋಳಾಡಲಿಲ್ಲ,’ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ.</verse>
				<verse number="18">“ಏಕೆಂದರೆ ಯೋಹಾನನು ಅನ್ನಪಾನಗಳನ್ನು ತೆಗೆದುಕೊಳ್ಳಲಿಲ್ಲ. ಅದಕ್ಕೆ ಅವರು, ‘ಅವನಿಗೆ ದೆವ್ವ ಹಿಡಿದಿದೆ,’ ಎಂದರು.</verse>
				<verse number="19">ಮನುಷ್ಯಪುತ್ರನಾದ ನಾನು ಅನ್ನಪಾನ ಸೇವಿಸುವವನಾಗಿ ಬಂದೆನು. ಅದಕ್ಕೆ ಅವರು, ‘ಇಗೋ, ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು,’ ಎಂದು ಹೇಳುತ್ತಾರೆ. ಆದರೆ ಜ್ಞಾನವು ತನ್ನ ಕೃತ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದು ಹೇಳಿದರು.</verse>
				<verse number="20">ತರುವಾಯ ತಮ್ಮ ಹೆಚ್ಚಾದ ಮಹತ್ಕಾರ್ಯಗಳು ನಡೆದ ಪಟ್ಟಣಗಳು, ದೇವರ ಕಡೆಗೆ ತಿರುಗಿಕೊಳ್ಳದೆ ಇದ್ದುದರಿಂದ ಯೇಸು ಅವುಗಳನ್ನು ಗದರಿಸತೊಡಗಿ,</verse>
				<verse number="21">“ಖೊರಾಜಿನೇ, ನಿನಗೆ ಕಷ್ಟ! ಬೇತ್ಸಾಯಿದವೇ, ನಿನಗೆ ಕಷ್ಟ! ಏಕೆಂದರೆ ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ಟೈರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅಲ್ಲಿಯವರು ಬಹಳ ಕಾಲದ ಹಿಂದೆಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ದೇವರ ಕಡೆ ತಿರುಗಿಕೊಳ್ಳುತ್ತಿದ್ದರು.</verse>
				<verse number="22">ಆದರೂ ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ಟೈರ್ ಮತ್ತು ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ತಾಳಬಹುದಾಗಿರುವುದು.</verse>
				<verse number="23">ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ ಇಳಿಯುವೆ. ಏಕೆಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ, ಅದು ಇಂದಿನವರೆಗೂ ಉಳಿಯುತ್ತಿತ್ತು.</verse>
				<verse number="24">ಆದರೆ ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ಸೊದೋಮ್ ಪಟ್ಟಣದ ಗತಿಯು ಹೆಚ್ಚು ತಾಳಬಹುದಾಗಿರುವುದು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.</verse>
				<verse number="25">ಆ ಸಮಯದಲ್ಲಿ ಯೇಸು, “ತಂದೆಯೇ, ಪರಲೋಕ ಭೂಲೋಕಗಳ ಒಡೆಯನೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ.</verse>
				<verse number="26">ಹೌದು ತಂದೆಯೇ, ಹೀಗೆ ಮಾಡುವುದು ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋಚಿತು.</verse>
				<verse number="27">“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಬೇರೆ ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾನೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು.</verse>
				<verse number="28">“ಕಷ್ಟಪಡುವವರೇ, ಹೊರೆಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.</verse>
				<verse number="29">ನಾನು ಸಾತ್ವಿಕನೂ ದೀನ ಹೃದಯದವನೂ ಆಗಿರುವುದರಿಂದ ನೀವು ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ. ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.</verse>
				<verse number="30">ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ,” ಎಂದು ಹೇಳಿದರು.</verse>
			</chapter>
			<chapter number="12">
				<verse number="1">ಯೇಸು ಒಂದು ಸಬ್ಬತ್ ದಿನ ಪೈರಿನ ಹೊಲವನ್ನು ಹಾದುಹೋಗುತ್ತಿದ್ದಾಗ, ಅವರ ಶಿಷ್ಯರು ಹಸಿದಿದ್ದರಿಂದ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.</verse>
				<verse number="2">ಫರಿಸಾಯರು ಅದನ್ನು ಕಂಡು ಯೇಸುವಿಗೆ, “ಇಗೋ, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಯಮಕ್ಕೆ ವಿರುದ್ಧವಾಗಿರುವದನ್ನು ಮಾಡುತ್ತಿದ್ದಾರೆ,” ಎಂದರು.</verse>
				<verse number="3">ಅದಕ್ಕೆ ಯೇಸು ಅವರಿಗೆ, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೇ?</verse>
				<verse number="4">ಅವನು ದೇವರ ಆಲಯದೊಳಗೆ ಹೋಗಿ, ಯಾಜಕರ ಹೊರತು ತಾನಾಗಲಿ ತನ್ನ ಸಂಗಡಿಗರಾಗಲಿ, ತಿನ್ನುವುದಕ್ಕೆ ಧರ್ಮಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತಿನ್ನಲಿಲ್ಲವೇ?</verse>
				<verse number="5">ಇದಲ್ಲದೆ ಸಬ್ಬತ್ ದಿನದಲ್ಲಿ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನವನ್ನು ಉಲ್ಲಂಘಿಸಿದರೂ ನಿರ್ದೋಷಿಗಳಾಗಿದ್ದಾರೆಂದು ನೀವು ನಿಯಮದಲ್ಲಿ ಓದಲಿಲ್ಲವೇ?</verse>
				<verse number="6">ದೇವಾಲಯಕ್ಕಿಂತಲೂ ದೊಡ್ಡವನು ಇಲ್ಲಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ.</verse>
				<verse number="7">ಆದರೆ, ‘ನಾನು ಯಜ್ಞವನ್ನಲ್ಲ, ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬುದರ ಅರ್ಥವನ್ನು ನೀವು ತಿಳಿದಿದ್ದರೆ, ನಿರಪರಾಧಿಗಳನ್ನು ಖಂಡಿಸುತ್ತಿರಲಿಲ್ಲ.</verse>
				<verse number="8">ಏಕೆಂದರೆ ಮನುಷ್ಯಪುತ್ರನಾದ ನಾನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದೇನೆ,” ಎಂದು ಹೇಳಿದರು.</verse>
				<verse number="9">ಯೇಸು ಅಲ್ಲಿಂದ ಹೊರಟು ಅವರ ಸಭಾಮಂದಿರದೊಳಕ್ಕೆ ಹೋದರು.</verse>
				<verse number="10">ಅಲ್ಲಿ ಕೈ ಬತ್ತಿದ ಒಬ್ಬ ಮನುಷ್ಯನಿದ್ದನು. ಆಗ ಫರಿಸಾಯರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು ಆತನಿಗೆ, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ನ್ಯಾಯಸಮ್ಮತವೋ?” ಎಂದು ಕೇಳಿದರು.</verse>
				<verse number="11">ಅದಕ್ಕೆ ಯೇಸು ಅವರಿಗೆ, “ನಿಮ್ಮಲ್ಲಿ ಯಾವನಿಗಾದರೂ ಒಂದು ಕುರಿಯಿರಲಾಗಿ ಅದು ಸಬ್ಬತ್ ದಿನದಲ್ಲಿ ಕುಣಿಯೊಳಗೆ ಬಿದ್ದರೆ, ಅವನು ಅದನ್ನು ಮೇಲಕ್ಕೆ ಎತ್ತದೆ ಇರುವನೇ?</verse>
				<verse number="12">ಕುರಿಗಿಂತಲೂ ಒಬ್ಬ ಮನುಷ್ಯನು ಎಷ್ಟೋ ಮೌಲ್ಯವುಳ್ಳವನಾಗಿದ್ದಾನಲ್ಲವೇ? ಆದ್ದರಿಂದ ಸಬ್ಬತ್ ದಿನಗಳಲ್ಲಿ ಒಳ್ಳೆಯದನ್ನು ಮಾಡುವುದು ನ್ಯಾಯಸಮ್ಮತವಾಗಿದೆ!” ಎಂದು ಹೇಳಿದರು.</verse>
				<verse number="13">ಆಗ ಯೇಸು ಆ ಮನುಷ್ಯನಿಗೆ, “ನಿನ್ನ ಕೈಚಾಚು” ಎಂದರು. ಅವನು ಕೈಚಾಚಿದಾಗ ಅದು ಸಂಪೂರ್ಣ ವಾಸಿಯಾಗಿ ಇನ್ನೊಂದು ಕೈಯಂತೆಯೇ ಆಯಿತು.</verse>
				<verse number="14">ಆದರೆ ಫರಿಸಾಯರು ಹೊರಗೆ ಹೋಗಿ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಅವರ ವಿರೋಧವಾಗಿ ಆಲೋಚನೆಮಾಡಿದರು.</verse>
				<verse number="15">ಆದರೆ ಯೇಸು ಅದನ್ನು ತಿಳಿದು ಅಲ್ಲಿಂದ ಹೊರಟು ಹೋದರು. ದೊಡ್ಡ ಜನರ ಗುಂಪು ಅವರನ್ನು ಹಿಂಬಾಲಿಸಿತು. ಯೇಸು ಅವರಲ್ಲಿ ಅಸ್ವಸ್ಥರಾದವರನ್ನು ಗುಣಪಡಿಸಿದರು.</verse>
				<verse number="16">ಆದರೆ ಯೇಸು ತಾನು ಯಾರೆಂದು ಯಾರಿಗೂ ಪ್ರಕಟಿಸಬಾರದೆಂದು ಅವರನ್ನು ಎಚ್ಚರಿಸಿದರು.</verse>
				<verse number="17">ಹೀಗೆ ದೇವರು ಪ್ರವಾದಿಯಾದ ಯೆಶಾಯನ ಮುಖಾಂತರ ಹೇಳಿದ ಮಾತು ನೆರವೇರಿತು. ಅದೇನೆಂದರೆ:</verse>
				<verse number="18">“ಈತನು ನಾನು ಆರಿಸಿಕೊಂಡ ನನ್ನ ದಾಸನು, ಈ ನನ್ನ ಪ್ರಿಯನಲ್ಲಿ ನನ್ನ ಪ್ರಾಣವು ಸಂಪೂರ್ಣ ಮೆಚ್ಚಿದೆ. ನಾನು ಈತನ ಮೇಲೆ ನನ್ನ ಆತ್ಮವನ್ನು ಇರಿಸುವೆನು, ಈತನು ಜನಾಂಗಗಳಿಗೆ ನ್ಯಾಯವನ್ನು ಸಾರುವನು.</verse>
				<verse number="19">ಈತನು ಜಗಳವಾಡುವವನಲ್ಲ, ಕೂಗಾಡುವವನಲ್ಲ; ಬೀದಿಗಳಲ್ಲಿ ಈತನ ಸ್ವರವನ್ನು ಯಾರೂ ಕೇಳಿಸಿಕೊಳ್ಳುವುದೂ ಇಲ್ಲ.</verse>
				<verse number="20">ಈತನು ನ್ಯಾಯವನ್ನು ಜಯಕ್ಕೆ ನಡೆಸುವವರೆಗೆ, ಜಜ್ಜಿದ ದಂಟನ್ನು ಮುರಿಯುವವನಲ್ಲ, ಆರಿ ಹೋಗುತ್ತಿರುವ ಬತ್ತಿಯನ್ನು ನಂದಿಸುವವನೂ ಅಲ್ಲ.</verse>
				<verse number="21">ಈತನ ಹೆಸರಿನಲ್ಲಿಯೇ ಯೆಹೂದ್ಯರಲ್ಲದವರು ನಿರೀಕ್ಷೆ ಇಡುವರು.”</verse>
				<verse number="22">ಆಗ ಕೆಲವರು ದೆವ್ವಹಿಡಿದ ಕುರುಡನೂ ಮೂಕನೂ ಆಗಿದ್ದ ಒಬ್ಬನನ್ನು ಯೇಸುವಿನ ಬಳಿಗೆ ತಂದರು. ಅವರು ಅವನನ್ನು ಗುಣಪಡಿಸಿದ್ದರಿಂದ, ಕುರುಡನೂ ಮೂಕನೂ ಆಗಿದ್ದವನು ಮಾತನಾಡಿದನು ಮತ್ತು ದೃಷ್ಟಿ ಹೊಂದಿದನು.</verse>
				<verse number="23">ಆಗ ಜನರೆಲ್ಲರೂ ವಿಸ್ಮಯಗೊಂಡವರಾಗಿ, “ದಾವೀದನ ಪುತ್ರನು ಈತನೇ ಅಲ್ಲವೇ?” ಎಂದರು.</verse>
				<verse number="24">ಆದರೆ ಫರಿಸಾಯರು ಇದನ್ನು ಕೇಳಿದಾಗ, “ಈತನು ದೆವ್ವಗಳನ್ನು ಓಡಿಸುತ್ತಿರುವುದು ದೆವ್ವಗಳ ಅಧಿಪತಿಯಾದ ಬೆಲ್ಜೆಬೂಲನಿಂದಲೇ,” ಎಂದರು.</verse>
				<verse number="25">ಯೇಸು ಅವರ ಆಲೋಚನೆಗಳನ್ನು ತಿಳಿದು ಅವರಿಗೆ, “ತನಗೆ ವಿರೋಧವಾಗಿ ವಿಭಜಿಸಿಕೊಳ್ಳುವ ಪ್ರತಿಯೊಂದು ರಾಜ್ಯವು ನಾಶವಾಗುವುದು ಮತ್ತು ತನಗೆ ವಿರೋಧವಾಗಿ ವಿಭಾಗವಾಗಿರುವ ಪ್ರತಿಯೊಂದು ಪಟ್ಟಣವಾಗಲಿ ಮನೆಯಾಗಲಿ ನಿಲ್ಲುವುದಿಲ್ಲ.</verse>
				<verse number="26">ಇದಲ್ಲದೆ ಸೈತಾನನು ಸೈತಾನನನ್ನು ಹೊರಗೆ ಓಡಿಸಿದರೆ, ಅವನು ತನಗೆ ವಿರೋಧವಾಗಿ ವಿಭಾಗವಾಗಿರುವನು. ಹಾಗಾದರೆ ಅವನ ರಾಜ್ಯವು ನಿಲ್ಲುವುದು ಹೇಗೆ?</verse>
				<verse number="27">ಬೆಲ್ಜೆಬೂಲನಿಂದ ನಾನು ದೆವ್ವಗಳನ್ನು ಓಡಿಸುವುದಾದರೆ, ನಿಮ್ಮ ಜನರು ಯಾರಿಂದ ಅವುಗಳನ್ನು ಓಡಿಸುತ್ತಾರೆ? ಆದ್ದರಿಂದ, ನಿಮ್ಮವರೇ ನಿಮಗೆ ನ್ಯಾಯಾಧಿಪತಿಗಳಾಗಿರುವರು.</verse>
				<verse number="28">ನಾನು ದೇವರ ಆತ್ಮನಿಂದ ದೆವ್ವಗಳನ್ನು ಓಡಿಸುವುದಾದರೆ ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.</verse>
				<verse number="29">“ಇದಲ್ಲದೆ, ಯಾವನಾದರೂ ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ, ಅವನ ಮನೆಯನ್ನು ಪ್ರವೇಶಿಸಿ ಅವನ ಸೊತ್ತನ್ನು ಸೂರೆ ಮಾಡಲಾದೀತೇ? ಕಟ್ಟಿದ ನಂತರ ಅವನ ಮನೆಯನ್ನು ಕೊಳ್ಳೆ ಹೊಡೆಯಬಹುದು.</verse>
				<verse number="30">“ನನ್ನ ಪರವಾಗಿ ಇರದವನು ನನಗೆ ವಿರೋಧಿಯಾಗಿದ್ದಾನೆ, ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.</verse>
				<verse number="31">ಆದಕಾರಣ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಕ್ಕೂ ದೂಷಣೆಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮರಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದಕ್ಕೆ ಕ್ಷಮಾಪಣೆಯಿಲ್ಲ.</verse>
				<verse number="32">ಯಾರಾದರೂ ಮನುಷ್ಯಪುತ್ರನಾದ ನನಗೆ ವಿರೋಧವಾಗಿ ಮಾತನಾಡುವ ಪ್ರತಿಯೊಬ್ಬರಿಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮನಿಗೆ ವಿರೋಧವಾಗಿ ಮಾತನಾಡಿದರೆ, ಈ ಯುಗದಲ್ಲೇ ಆಗಲಿ ಬರುವ ಯುಗದಲ್ಲೇ ಆಗಲಿ ಅದಕ್ಕಾಗಿ ಅವರಿಗೆ ಕ್ಷಮೆ ದೊರಕುವುದಿಲ್ಲ.</verse>
				<verse number="33">“ಮರವು ಒಳ್ಳೆಯದಾಗಿದ್ದರೆ, ಅದರ ಫಲವು ಒಳ್ಳೆಯದಾಗಿರುವುದು; ಮರವು ಕೆಟ್ಟದ್ದಾಗಿದ್ದರೆ, ಅದರ ಫಲವು ಕೆಟ್ಟದ್ದಾಗಿರುವುದು. ಏಕೆಂದರೆ ಮರವನ್ನು ಅದರ ಫಲದಿಂದಲೇ ಗುರುತಿಸಲಾಗುವುದು.</verse>
				<verse number="34">ಸರ್ಪಸಂತತಿಯವರೇ, ಕೆಟ್ಟವರಾಗಿರುವ ನೀವು ಒಳ್ಳೆಯದೇನನ್ನಾದರೂ ಮಾತನಾಡುವಿರೋ? ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.</verse>
				<verse number="35">ಒಳ್ಳೆಯವನು ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.</verse>
				<verse number="36">ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.</verse>
				<verse number="37">ನೀನು ನಿನ್ನ ಮಾತುಗಳಿಂದಲೇ ನೀತಿವಂತನೆಂದು ನಿರ್ಣಯಿಸಲಾಗುವುದು ಮತ್ತು ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ನಿರ್ಣಯಿಸಲಾಗುವುದು,” ಎಂದು ಹೇಳಿದರು.</verse>
				<verse number="38">ಆಗ ನಿಯಮ ಬೋಧಕರೂ ಫರಿಸಾಯರೂ, “ಬೋಧಕರೇ, ನಿನ್ನಿಂದ ಒಂದು ಸೂಚಕಕಾರ್ಯವನ್ನು ಕಾಣಬೇಕೆಂದಿದ್ದೇವೆ,” ಎಂದು ಕೇಳಿದರು.</verse>
				<verse number="39">ಯೇಸು ಉತ್ತರವಾಗಿ ಅವರಿಗೆ, “ವ್ಯಭಿಚಾರದ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ. ಪ್ರವಾದಿ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಈ ಸಂತತಿಗೆ ಕೊಡಲಾಗುವುದಿಲ್ಲ.</verse>
				<verse number="40">ಯೋನನು ಮೂರು ಹಗಲು ಮತ್ತು ಮೂರು ರಾತ್ರಿ ದೊಡ್ಡ ಮೀನಿನ ಹೊಟ್ಟೆಯಲ್ಲಿ ಇದ್ದ ಹಾಗೆಯೇ ಮನುಷ್ಯಪುತ್ರನಾದ ನಾನು ಮೂರು ಹಗಲು ಮತ್ತು ಮೂರು ರಾತ್ರಿ ಭೂಗರ್ಭದಲ್ಲಿರುವೆನು.</verse>
				<verse number="41">ನಿನೆವೆ ಪಟ್ಟಣದವರು ನ್ಯಾಯತೀರ್ಪಿನಲ್ಲಿ ಈ ಸಂತತಿಗೆ ಎದುರಾಗಿ ಎದ್ದು ನಿಂತು ಇದನ್ನು ಅಪರಾಧ ಎಂದು ತೀರ್ಪುಮಾಡುವರು, ಏಕೆಂದರೆ ಯೋನನು ಸಾರಿದ್ದನ್ನು ಕೇಳಿ ಅವರು ದೇವರ ಕಡೆಗೆ ತಿರುಗಿಕೊಂಡರು; ಇಗೋ, ಇಲ್ಲಿ ಯೋನನಿಗಿಂತಲೂ ತುಂಬಾ ದೊಡ್ಡವನು ಇದ್ದಾನೆ.</verse>
				<verse number="42">ನ್ಯಾಯತೀರ್ಪಿನಲ್ಲಿ ದಕ್ಷಿಣದ ರಾಣಿಯು ಈ ಸಂತತಿಗೆ ಎದುರಾಗಿ ಎದ್ದು ಇವರನ್ನು ಅಪರಾಧಿಗಳೆಂದು ತೀರ್ಪುಮಾಡುವಳು. ಏಕೆಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕಾಗಿ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತಲೂ ತುಂಬಾ ದೊಡ್ಡವನು ಇಲ್ಲಿದ್ದಾನೆ.</verse>
				<verse number="43">“ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ಹುಡುಕಾಡಿದರೂ ಅದನ್ನು ಕಂಡುಕೊಳ್ಳದೆ, ಅದು,</verse>
				<verse number="44">‘ನಾನು ಹೊರಟು ಬಂದ ನನ್ನ ಮನೆಗೆ ಹಿಂದಿರುಗುವೆನು,’ ಎಂದು ಹೇಳಿಕೊಂಡು ಬಂದು, ಆ ಮನೆಯು ಬರಿದಾಗಿಯೂ ಗುಡಿಸಿ ಅಲಂಕರಿಸಿರುವುದನ್ನು ಕಾಣುತ್ತದೆ.</verse>
				<verse number="45">ಆಗ ಅದು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ಅಶುದ್ಧಾತ್ಮಗಳನ್ನು ತನ್ನೊಂದಿಗೆ ಕರೆದುಕೊಂಡು ಅವನ ಒಳಗೆ ಸೇರಿ ಅಲ್ಲಿ ವಾಸಮಾಡುವವು. ಹೀಗೆ ಆ ಮನುಷ್ಯನ ಕಡೆಯ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು. ಅದರಂತೆಯೇ ಈ ದುಷ್ಟ ಸಂತತಿಗೂ ಆಗುವುದು,” ಎಂದು ಹೇಳಿದರು.</verse>
				<verse number="46">ಯೇಸು ಇನ್ನೂ ಜನರ ಸಂಗಡ ಮಾತನಾಡುತ್ತಿದ್ದಾಗ, ಅವರ ತಾಯಿ ಮತ್ತು ಸಹೋದರರು ಅವರೊಂದಿಗೆ ಮಾತನಾಡಬೇಕೆಂದು ಅಪೇಕ್ಷಿಸಿ ಹೊರಗೆ ನಿಂತಿದ್ದರು.</verse>
				<verse number="47">ಆಗ ಒಬ್ಬನು ಯೇಸುವಿಗೆ, “ನಿಮ್ಮ ತಾಯಿಯೂ ಸಹೋದರರೂ ನಿಮ್ಮೊಂದಿಗೆ ಮಾತನಾಡಲು ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ,” ಎಂದನು.</verse>
				<verse number="48">ಅದಕ್ಕೆ ಯೇಸು ತಮಗೆ ಹೇಳಿದವನಿಗೆ ಉತ್ತರವಾಗಿ, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎಂದು ಹೇಳಿ,</verse>
				<verse number="49">ಶಿಷ್ಯರ ಕಡೆಗೆ ತಮ್ಮ ಕೈಚಾಚಿ, “ಇಗೋ, ಇವರೇ ನನ್ನ ತಾಯಿ ಮತ್ತು ನನ್ನ ಸಹೋದರರು.</verse>
				<verse number="50">ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತವನ್ನು ಮಾಡುವವನೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ,” ಎಂದು ಹೇಳಿದರು.</verse>
			</chapter>
			<chapter number="13">
				<verse number="1">ಅದೇ ದಿನದಲ್ಲಿ ಯೇಸು ಮನೆಯಿಂದ ಹೊರಟುಹೋಗಿ ಸರೋವರದ ಬಳಿಯಲ್ಲಿ ಕುಳಿತುಕೊಂಡರು.</verse>
				<verse number="2">ಆಗ ಜನರ ದೊಡ್ಡ ಸಮೂಹವು ಯೇಸುವಿನ ಬಳಿಗೆ ಕೂಡಿಬಂದದ್ದರಿಂದ ಅವರು ದೋಣಿಯನ್ನು ಹತ್ತಿ ಕುಳಿತುಕೊಂಡರು, ಆ ಸಮೂಹದವರೆಲ್ಲಾ ದಡದ ಮೇಲೆ ನಿಂತಿದ್ದರು.</verse>
				<verse number="3">ಆಗ ಯೇಸು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದು: “ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು;</verse>
				<verse number="4">ಅವನು ಬಿತ್ತುತ್ತಿರುವಾಗ ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು, ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು.</verse>
				<verse number="5">ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು. ಅಲ್ಲಿ ಆಳವಾದ ಮಣ್ಣಿಲ್ಲದ ಕಾರಣ ಅವು ಬೇಗನೆ ಮೊಳೆತವು.</verse>
				<verse number="6">ಆದರೆ ಬಿಸಿಲೇರಿದಾಗ ಅವು ಬಾಡಿಹೋಗಿ, ಬೇರಿಲ್ಲದ ಕಾರಣ ಒಣಗಿಹೋದವು.</verse>
				<verse number="7">ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು, ಆ ಮುಳ್ಳುಗಿಡಗಳು ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.</verse>
				<verse number="8">ಆದರೆ ಕೆಲವು ಬೀಜಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು, ಒಂದು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು ಇನ್ನು ಕೆಲವು ಮೂವತ್ತರಷ್ಟು ಫಲಕೊಟ್ಟವು.</verse>
				<verse number="9">ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ.”</verse>
				<verse number="10">ತರುವಾಯ ಶಿಷ್ಯರು ಬಂದು ಯೇಸುವಿಗೆ, “ನೀವು ಸಾಮ್ಯಗಳಲ್ಲಿ ಅವರೊಡನೆ ಮಾತನಾಡುವುದೇಕೆ?” ಎಂದು ಕೇಳಿದರು.</verse>
				<verse number="11">ಯೇಸು ಅದಕ್ಕೆ ಉತ್ತರವಾಗಿ ಹೇಳಿದ್ದು: “ಪರಲೋಕ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವ ಜ್ಞಾನವು ನಿಮಗೆ ಕೊಡಲಾಗಿದೆ, ಆದರೆ ಅವರಿಗಲ್ಲ.</verse>
				<verse number="12">ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು, ಅವರಿಗೆ ಹೆಚ್ಚು ಸಮೃದ್ಧಿಯಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು.”</verse>
				<verse number="13">ಆದ್ದರಿಂದ, ನಾನು ಅವರೊಡನೆ ಸಾಮ್ಯಗಳಲ್ಲಿ ಮಾತನಾಡುತ್ತೇನೆ: “ಏಕೆಂದರೆ ಅವರು ಕಣ್ಣಾರೆ ನೋಡಿದರೂ ಕಾಣುವುದಿಲ್ಲ; ಕೇಳಿದರೂ ತಿಳಿದುಕೊಳ್ಳುವುದಿಲ್ಲ; ಅವರು ಗ್ರಹಿಸುವುದೂ ಇಲ್ಲ.</verse>
				<verse number="14">ಹೀಗೆ ಯೆಶಾಯನ ಪ್ರವಾದನೆಯು ಅವರಲ್ಲಿ ನೆರವೇರಿತು. ಅದೇನೆಂದರೆ, “ ‘ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ.</verse>
				<verse number="15">ಈ ಜನರ ಹೃದಯವು ಕಠೋರವಾಗಿದೆ; ಇವರ ಕಿವಿಗಳು ಕೇಳದ ಹಾಗೆ ಮಂದವಾಗಿವೆ, ಇವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ. ಇಲ್ಲವಾದರೆ ತಾವು ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ. ತಮ್ಮ ಹೃದಯದಿಂದ ತಿಳಿದು, ನನ್ನ ಕಡೆಗೆ ತಿರುಗಿಕೊಂಡಿದ್ದರೆ, ನಾನು ಅವರನ್ನು ಸ್ವಸ್ಥಪಡಿಸುತ್ತಿದ್ದೆನು,’ ಎಂಬುದೇ.</verse>
				<verse number="16">ಆದರೆ ನಿಮ್ಮ ಕಣ್ಣುಗಳು ಕಾಣುವುದರಿಂದಲೂ ನಿಮ್ಮ ಕಿವಿಗಳು ಕೇಳುವುದರಿಂದಲೂ ನೀವು ಧನ್ಯರು.</verse>
				<verse number="17">ನಾನು ಸತ್ಯವಾಗಿ ನಿಮಗೆ ಹೇಳುತ್ತೇನೆ, ಅನೇಕ ಪ್ರವಾದಿಗಳು ಮತ್ತು ನೀತಿವಂತರು ನೀವು ಕಾಣುವಂಥವುಗಳನ್ನು ಕಾಣಬೇಕೆಂದು ಅಪೇಕ್ಷಿಸಿದರೂ ಕಾಣಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ.</verse>
				<verse number="18">“ಆದ್ದರಿಂದ ಬಿತ್ತುವವನ ಸಾಮ್ಯದ ಅರ್ಥವನ್ನು ನೀವು ಕೇಳಿರಿ:</verse>
				<verse number="19">ಯಾರಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ, ಕೆಡುಕನು ಬಂದು ಅವರ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದುಹಾಕುತ್ತಾನೆ, ಇದೇ ದಾರಿಯ ಪಕ್ಕದಲ್ಲಿ ಬಿತ್ತಲಾಗಿರುವ ಬೀಜವಾಗಿರುವದು.</verse>
				<verse number="20">ಕಲ್ಲು ನೆಲದ ಮೇಲೆ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿದ ಕೂಡಲೇ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ.</verse>
				<verse number="21">ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ.</verse>
				<verse number="22">ಮುಳ್ಳುಗಿಡಗಳಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು ವಾಕ್ಯವನ್ನು ಕೇಳುತ್ತಾರೆ, ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ.</verse>
				<verse number="23">ಆದರೆ ಒಳ್ಳೆಯ ಭೂಮಿಯಲ್ಲಿ ಬಿತ್ತಲಾಗಿರುವ ಬೀಜವಾಗಿರುವವರು, ವಾಕ್ಯವನ್ನು ಕೇಳಿ ಅದನ್ನು ಗ್ರಹಿಸಿಕೊಳ್ಳುತ್ತಾರೆ. ಇವರು ಫಲ ಫಲಿಸುವವರಾಗಿ ನೂರರಷ್ಟು ಅರವತ್ತರಷ್ಟು ಮತ್ತು ಮೂವತ್ತರಷ್ಟು ಫಲವನ್ನು ಕೊಡುತ್ತಾರೆ.”</verse>
				<verse number="24">ಯೇಸು ಮತ್ತೊಂದು ಸಾಮ್ಯವನ್ನು ಹೇಳಿದರು: “ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.</verse>
				<verse number="25">ಆದರೆ ಜನರು ನಿದ್ರಿಸುತ್ತಿರುವಾಗ, ಅವನ ವೈರಿಯು ಬಂದು ಗೋಧಿಯ ನಡುವೆ ಕಳೆಯನ್ನು ಬಿತ್ತಿ ಹೊರಟುಹೋದನು.</verse>
				<verse number="26">ಗೋಧಿಯು ಮೊಳೆತು ಬೆಳೆಯುತ್ತಿರುವಾಗ, ಕಳೆ ಸಹ ಕಾಣಿಸಿಕೊಂಡಿತು.</verse>
				<verse number="27">“ಮನೆಯ ಯಜಮಾನನ ಸೇವಕರು ಅವನ ಬಳಿಗೆ ಬಂದು ಅವನಿಗೆ, ‘ಅಯ್ಯಾ, ನೀನು ನಿನ್ನ ಹೊಲದಲ್ಲಿ ಒಳ್ಳೆಯ ಬೀಜವನ್ನು ಬಿತ್ತಿದೆಯಲ್ಲಾ? ಆದರೆ ಈ ಕಳೆಯು ಎಲ್ಲಿಂದ ಬಂತು?’ ಎಂದು ಕೇಳಿದರು.</verse>
				<verse number="28">“ಯಜಮಾನನು ಅವರಿಗೆ, ‘ವೈರಿಯು ಇದನ್ನು ಮಾಡಿದ್ದಾನೆ,’ ಎಂದನು. “ಆಗ ಸೇವಕರು ಅವನಿಗೆ, ‘ನಾವು ಹೋಗಿ ಅವುಗಳನ್ನು ಕಿತ್ತುಹಾಕೋಣವೇ?’ ಎಂದು ಕೇಳಿದರು.</verse>
				<verse number="29">“ಆದರೆ ಯಜಮಾನನು, ‘ಬೇಡ, ನೀವು ಕಳೆಯನ್ನು ಕೀಳುವಾಗ, ಅವುಗಳೊಂದಿಗೆ ಗೋಧಿಯನ್ನೂ ಕಿತ್ತುಬಿಟ್ಟೀರಿ.</verse>
				<verse number="30">ಸುಗ್ಗಿಯ ಕಾಲದವರೆಗೆ ಎರಡೂ ಜೊತೆಯಲ್ಲಿ ಬೆಳೆಯಲಿ. ಸುಗ್ಗಿಯ ಕಾಲದಲ್ಲಿ ನಾನು ಕೊಯ್ಯುವವರಿಗೆ: ಮೊದಲು ಕಳೆಯನ್ನು ಕೂಡಿಸಿ ಅವುಗಳನ್ನು ಸುಡುವುದಕ್ಕೆ ಬೇರೆ ಕಟ್ಟಿಡಿರಿ, ಗೋಧಿಯನ್ನು ನನ್ನ ಕಣಜದಲ್ಲಿ ಕೂಡಿಸಿರಿ ಎಂದು ಹೇಳುವೆನು,’ ಅಂದನು.”</verse>
				<verse number="31">ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು, ಒಬ್ಬ ಮನುಷ್ಯನು ಸಾಸಿವೆ ಕಾಳನ್ನು ತೆಗೆದುಕೊಂಡುಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದಕ್ಕೆ ಹೋಲಿಕೆಯಾಗಿದೆ.</verse>
				<verse number="32">ಅದು ಎಲ್ಲಾ ಬೀಜಗಳಿಗಿಂತಲೂ ಸಣ್ಣದಾಗಿದ್ದರೂ ಅದು ಬೆಳೆದಾಗ, ಎಲ್ಲಾ ಸಸ್ಯಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು, ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸಮಾಡುತ್ತವೆ.”</verse>
				<verse number="33">ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದರು: “ಪರಲೋಕ ರಾಜ್ಯವು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀಯು ತೆಗೆದುಕೊಂಡು ಹುಳಿಯಿಲ್ಲದ ಸುಮಾರು ಇಪ್ಪತ್ತೇಳು ಕಿಲೋಗ್ರಾಂ ಹಿಟ್ಟಿನಲ್ಲಿ ಕಲಸಿದಾಗ ಆ ಹಿಟ್ಟೆಲ್ಲಾ ಹುಳಿಯಾಯಿತು.”</verse>
				<verse number="34">ಯೇಸು ಇವೆಲ್ಲವನ್ನು ಜನಸಮೂಹದೊಂದಿಗೆ ಸಾಮ್ಯಗಳಲ್ಲಿಯೇ ಹೇಳಿದರು; ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ.</verse>
				<verse number="35">ಹೀಗೆ ಒಬ್ಬ ಪ್ರವಾದಿಯ ಮೂಲಕ ಹೇಳಿದ ಮಾತು ನೆರವೇರಿತು: “ನಾನು ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು. ನಾನು ಲೋಕ ಪ್ರಾರಂಭದಿಂದ ಮರೆಯಾದವುಗಳನ್ನು ಪ್ರಕಟಪಡಿಸುವೆನು.”</verse>
				<verse number="36">ತರುವಾಯ ಯೇಸು ಜನಸಮೂಹವನ್ನು ಕಳುಹಿಸಿಬಿಟ್ಟು ಮನೆಯೊಳಕ್ಕೆ ಹೋದರು. ಆಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ಹೊಲದಲ್ಲಿರುವ ಕಳೆಯ ಸಾಮ್ಯವನ್ನು ನಮಗೆ ವಿವರಿಸಿರಿ,” ಎಂದರು.</verse>
				<verse number="37">ಯೇಸು ಉತ್ತರವಾಗಿ ಅವರಿಗೆ, “ಒಳ್ಳೆಯ ಬೀಜ ಬಿತ್ತುವವನು ಮನುಷ್ಯಪುತ್ರನು.</verse>
				<verse number="38">ಹೊಲವು ಈ ಲೋಕ; ಒಳ್ಳೆಯ ಬೀಜವು ದೇವರ ರಾಜ್ಯದ ಮಕ್ಕಳು; ಕಳೆಯು ಕೆಡುಕನ ಮಕ್ಕಳಾಗಿದ್ದಾರೆ.</verse>
				<verse number="39">ಅದನ್ನು ಬಿತ್ತಿದ ವೈರಿಯು ಸೈತಾನನೇ. ಸುಗ್ಗಿಯ ಕಾಲವು ಲೋಕಾಂತ್ಯವಾಗಿದೆ. ಕೊಯ್ಯುವವರು ದೇವದೂತರೇ.</verse>
				<verse number="40">“ಹೇಗೆ ಕಳೆಯನ್ನು ಕಿತ್ತು ಬೆಂಕಿಯಲ್ಲಿ ಸುಡುವರೋ, ಹಾಗೆಯೇ ಈ ಲೋಕಾಂತ್ಯದಲ್ಲಿ ಆಗುವುದು.</verse>
				<verse number="41">ಮನುಷ್ಯಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಪಾಪಕ್ಕೆ ಆತಂಕವಾದ ಎಲ್ಲವನ್ನೂ, ಕೇಡುಮಾಡುವ ಎಲ್ಲರನ್ನೂ ಆತನ ರಾಜ್ಯದೊಳಗಿಂದ ಕೂಡಿಸಿ,</verse>
				<verse number="42">ದೂತರು ಅವರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು.</verse>
				<verse number="43">ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ.</verse>
				<verse number="44">“ಪರಲೋಕ ರಾಜ್ಯವು ಹೊಲದಲ್ಲಿ ಹೂಳಿಟ್ಟ ನಿಕ್ಷೇಪಕ್ಕೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ಕಂಡುಕೊಂಡು ಮುಚ್ಚಿಟ್ಟು, ಅದರ ಸಂತೋಷದ ನಿಮಿತ್ತ ಹೊರಟುಹೋಗಿ, ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.</verse>
				<verse number="45">“ಪರಲೋಕ ರಾಜ್ಯವು ಒಳ್ಳೆಯ ಮುತ್ತುಗಳನ್ನು ಹುಡುಕುವ ವ್ಯಾಪಾರಸ್ಥನಿಗೆ ಹೋಲಿಕೆಯಾಗಿದೆ.</verse>
				<verse number="46">ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡು, ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಳ್ಳುತ್ತಾನೆ.</verse>
				<verse number="47">“ಪರಲೋಕ ರಾಜ್ಯವು, ಸರೋವರದಲ್ಲಿ ಬೀಸಲಾಗಿ ಎಲ್ಲಾ ತರವಾದ ಮೀನುಗಳನ್ನು ಕೂಡಿಸಿದ ಬಲೆಗೆ ಹೋಲಿಕೆಯಾಗಿದೆ.</verse>
				<verse number="48">ಬಲೆ ತುಂಬಿದಾಗ, ಬೆಸ್ತರು ಅದನ್ನು ದಡಕ್ಕೆ ಎಳೆದು ಕೂತುಕೊಂಡು ಒಳ್ಳೆಯವುಗಳನ್ನು ಬುಟ್ಟಿಗಳಲ್ಲಿ ತುಂಬಿಸಿ, ಕೆಟ್ಟವುಗಳನ್ನು ಹೊರಗೆ ಬಿಸಾಡುತ್ತಾರೆ.</verse>
				<verse number="49">ಹಾಗೆಯೇ ಲೋಕಾಂತ್ಯದಲ್ಲಿ ಇರುವುದು. ದೇವದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸಿ,</verse>
				<verse number="50">ಅವರನ್ನು ಅಗ್ನಿಕುಂಡದಲ್ಲಿ ಹಾಕುವರು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು,” ಎಂದು ಹೇಳಿದರು.</verse>
				<verse number="51">ಯೇಸು ಶಿಷ್ಯರಿಗೆ, “ಇವುಗಳನ್ನೆಲ್ಲಾ ನೀವು ಗ್ರಹಿಸಿದ್ದೀರಾ?” ಎಂದು ಕೇಳಿದರು. ಅದಕ್ಕೆ, ಅವರು ಯೇಸುವಿಗೆ, “ಹೌದು,” ಎಂದು ಹೇಳಿದರು.</verse>
				<verse number="52">ಯೇಸು ಅವರಿಗೆ, “ಆದಕಾರಣ ಪರಲೋಕ ರಾಜ್ಯದ ಶಿಷ್ಯನಾಗಿರುವ ಪ್ರತಿಯೊಬ್ಬ ನಿಯಮ ಬೋಧಕನು, ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ,” ಎಂದರು.</verse>
				<verse number="53">ಈ ಸಾಮ್ಯಗಳನ್ನು ಮುಗಿಸಿದ ತರುವಾಯ ಯೇಸು ಅಲ್ಲಿಂದ ಹೊರಟು ಹೋದರು.</verse>
				<verse number="54">ಯೇಸು ತಮ್ಮ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಅವರಿಗೆ ಬೋಧನೆ ಮಾಡಲು ಪ್ರಾರಂಭಿಸಲು, ಅವರು ವಿಸ್ಮಯಗೊಂಡು, “ಈ ಜ್ಞಾನವೂ ಈ ಮಹತ್ಕಾರ್ಯಗಳೂ ಈತನಿಗೆ ಎಲ್ಲಿಂದ ಬಂದವು?</verse>
				<verse number="55">ಈತನು ಬಡಗಿಯ ಪುತ್ರನಲ್ಲವೇ? ಮರಿಯಳೆಂಬುವಳು ಈತನ ತಾಯಿಯಲ್ಲವೇ? ಯಾಕೋಬ, ಯೋಸೇಫ, ಸೀಮೋನ, ಯೂದ ಎಂಬುವರು ಈತನ ತಮ್ಮಂದಿರಲ್ಲವೇ?</verse>
				<verse number="56">ಈತನ ತಂಗಿಯರೆಲ್ಲರೂ ನಮ್ಮೊಂದಿಗೆ ಇದ್ದಾರಲ್ಲವೇ? ಹಾಗಾದರೆ, ಇವೆಲ್ಲವು ಈತನಿಗೆ ಎಲ್ಲಿಂದ ಬಂದವು?” ಎಂದು ಮಾತನಾಡಿಕೊಂಡರು.</verse>
				<verse number="57">ಅವರು ಯೇಸುವನ್ನು ತಾತ್ಸಾರ ಮಾಡಿದರು. ಆದರೆ ಯೇಸು ಅವರಿಗೆ, “ಪ್ರವಾದಿಗೆ ತನ್ನ ಸ್ವಂತ ಊರಿನಲ್ಲಿ ಹಾಗೂ ತನ್ನ ಸ್ವಂತ ಮನೆಯಲ್ಲಿ ಮಾತ್ರ ಮರ್ಯಾದೆ ಇರುವುದಿಲ್ಲ,” ಎಂದರು.</verse>
				<verse number="58">ಯೇಸು ಅವರ ಅಪನಂಬಿಕೆಯ ದೆಸೆಯಿಂದ ಅಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲ.</verse>
			</chapter>
			<chapter number="14">
				<verse number="1">ಆ ಕಾಲದಲ್ಲಿ ಚತುರಾಧಿಪತಿಯಾದ ಹೆರೋದನು ಯೇಸುವಿನ ಕೀರ್ತಿಯನ್ನು ಕೇಳಿ,</verse>
				<verse number="2">ತನ್ನ ಸೇವಕರಿಗೆ, “ಈತನು ಸ್ನಾನಿಕನಾದ ಯೋಹಾನನೇ. ಈಗ ಇವನು ಸತ್ತವರೊಳಗಿಂದ ಎದ್ದಿದ್ದಾನೆ! ಆದ್ದರಿಂದಲೇ ಈತನಲ್ಲಿ ಅದ್ಭುತಕಾರ್ಯಗಳನ್ನು ನಡೆಸುವ ಶಕ್ತಿಗಳಿವೆ,” ಎಂದು ಹೇಳಿದನು.</verse>
				<verse number="3">ಹೆರೋದನು ತನ್ನ ಸಹೋದರ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತವಾಗಿ, ಯೋಹಾನನನ್ನು ಹಿಡಿಸಿ, ಕಟ್ಟಿ ಸೆರೆಯಲ್ಲಿ ಹಾಕಿಸಿದ್ದನು.</verse>
				<verse number="4">ಏಕೆಂದರೆ ಯೋಹಾನನು, “ನೀನು ಅವಳನ್ನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಅವನಿಗೆ ಹೇಳಿದ್ದನು.</verse>
				<verse number="5">ಹೆರೋದನು ಯೋಹಾನನನ್ನು ಕೊಲ್ಲಬೇಕೆಂದಿದ್ದರೂ ಜನಸಮೂಹಕ್ಕೆ ಭಯಪಟ್ಟನು. ಅವರು ಯೋಹಾನನನ್ನು ಪ್ರವಾದಿಯೆಂದು ಎಣಿಸಿದ್ದರು.</verse>
				<verse number="6">ಆದರೆ ಹೆರೋದನ ಹುಟ್ಟಿದ ದಿನವನ್ನು ಆಚರಿಸುವಾಗ, ಹೆರೋದ್ಯಳ ಮಗಳು ಅವರ ಮುಂದೆ ನರ್ತನ ಮಾಡಿ ಹೆರೋದನನ್ನು ಬಹಳ ಮೆಚ್ಚಿಸಿದಳು.</verse>
				<verse number="7">ಆದ್ದರಿಂದ ಅವಳು ಏನು ಕೇಳಿಕೊಂಡರೂ ಅವಳಿಗೆ ಕೊಡುವೆನೆಂದು ಅರಸನು ಆಣೆಯಿಟ್ಟು ಪ್ರಮಾಣ ಮಾಡಿದನು.</verse>
				<verse number="8">ಅವಳು ತನ್ನ ತಾಯಿಯ ಸಲಹೆ ಪಡೆದು, “ಸ್ನಾನಿಕನಾದ ಯೋಹಾನನ ತಲೆಯನ್ನು ಇಲ್ಲಿಯೇ ಒಂದು ತಟ್ಟೆಯಲ್ಲಿ ನನಗೆ ತರಿಸಿಕೊಡು,” ಎಂದು ಹೇಳಿದಳು.</verse>
				<verse number="9">ಆಗ ಅರಸನು ದುಃಖಪಟ್ಟರೂ ತನ್ನ ಪ್ರಮಾಣದ ನಿಮಿತ್ತವಾಗಿ ಮತ್ತು ಭೋಜನಕ್ಕೆ ಬಂದ ಅತಿಥಿಗಳ ನಿಮಿತ್ತವಾಗಿ ಅದನ್ನು ಅವಳಿಗೆ ಕೊಡುವಂತೆ ಅಪ್ಪಣೆಕೊಟ್ಟನು.</verse>
				<verse number="10">ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿದ್ದ ಯೋಹಾನನ ತಲೆಯನ್ನು ಕಡಿಸಿದನು.</verse>
				<verse number="11">ಇದಲ್ಲದೆ ಅವನ ತಲೆಯನ್ನು ಒಂದು ತಟ್ಟೆಯಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು.</verse>
				<verse number="12">ಬಳಿಕ ಯೋಹಾನನ ಶಿಷ್ಯರು ಬಂದು ಅವನ ಶವವನ್ನು ತೆಗೆದುಕೊಂಡುಹೋಗಿ ಸಮಾಧಿಮಾಡಿದರು. ಅನಂತರ ಹೋಗಿ ಯೇಸುವಿಗೆ ತಿಳಿಸಿದರು.</verse>
				<verse number="13">ಯೇಸು ಆ ವಿಷಯವನ್ನು ಕೇಳಿದಾಗ ದೋಣಿಯನ್ನು ಹತ್ತಿ ಅಲ್ಲಿಂದ ಏಕಾಂತ ಸ್ಥಳಕ್ಕೆ ಹೊರಟರು. ಜನರು ಇದನ್ನು ಕೇಳಿ ಪಟ್ಟಣಗಳಿಂದ ಕಾಲು ನಡಿಗೆಯಲ್ಲಿ ಯೇಸುವನ್ನು ಹಿಂಬಾಲಿಸಿದರು.</verse>
				<verse number="14">ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ಕಂಡು, ಅವರ ಮೇಲೆ ಕನಿಕರಪಟ್ಟು, ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದರು.</verse>
				<verse number="15">ಸಂಜೆಯಾದಾಗ ಶಿಷ್ಯರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನಪ್ರದೇಶ, ಸಮಯವು ದಾಟಿದೆ. ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು,” ಎಂದರು.</verse>
				<verse number="16">ಆದರೆ ಯೇಸುವು, “ಅವರು ಹೋಗಬೇಕಾಗಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದು ಹೇಳಿದರು.</verse>
				<verse number="17">ಅವರು ಯೇಸುವಿಗೆ, “ನಮ್ಮ ಹತ್ತಿರ ಐದು ರೊಟ್ಟಿ ಎರಡು ಮೀನುಗಳು ಮಾತ್ರ ಇವೆ,” ಎಂದು ಉತ್ತರಕೊಟ್ಟರು.</verse>
				<verse number="18">ಯೇಸು, “ಅವುಗಳನ್ನು ತೆಗೆದುಕೊಂಡು ನನ್ನ ಬಳಿಗೆ ಬನ್ನಿರಿ,” ಎಂದರು.</verse>
				<verse number="19">ಜನಸಮೂಹವು ಹುಲ್ಲಿನ ಮೇಲೆ ಕುಳಿತುಕೊಳ್ಳಬೇಕೆಂದು ಯೇಸು ಅಪ್ಪಣೆಕೊಟ್ಟು, ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟರು. ಶಿಷ್ಯರು ಜನಸಮೂಹಕ್ಕೆ ಕೊಟ್ಟರು.</verse>
				<verse number="20">ಅವರೆಲ್ಲರೂ ತಿಂದು ತೃಪ್ತರಾದರು. ಶಿಷ್ಯರು ಉಳಿದ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿ ತುಂಬಿದವು.</verse>
				<verse number="21">ಊಟಮಾಡಿದವರಲ್ಲಿ ಸ್ತ್ರೀಯರೂ ಮಕ್ಕಳೂ ಅಲ್ಲದೆ ಗಂಡಸರೇ ಹೆಚ್ಚು ಕಡಿಮೆ ಐದು ಸಾವಿರ ಮಂದಿ ಇದ್ದರು.</verse>
				<verse number="22">ಇದಾದ ಕೂಡಲೇ ಯೇಸು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ತಮ್ಮ ಶಿಷ್ಯರು ದೋಣಿಯನ್ನು ಹತ್ತಿ ತಮಗಿಂತ ಮುಂದಾಗಿ ಆಚೆದಡಕ್ಕೆ ಹೋಗಬೇಕೆಂದು ಆಜ್ಞಾಪಿಸಿದರು.</verse>
				<verse number="23">ಯೇಸು ಜನಸಮೂಹವನ್ನು ಕಳುಹಿಸಿದ ಮೇಲೆ, ಪ್ರಾರ್ಥನೆಮಾಡಲು ಏಕಾಂತವಾಗಿ ಬೆಟ್ಟಕ್ಕೆ ಹೋದರು. ಸಂಜೆಯಾದಾಗ ಯೇಸು ಒಬ್ಬರೇ ಅಲ್ಲಿ ಇದ್ದರು.</verse>
				<verse number="24">ಅಷ್ಟರಲ್ಲಿ ದೋಣಿಯು ತೀರದಿಂದ ಬಹುದೂರ ಹೋಗಿತ್ತು, ಎದುರುಗಾಳಿ ಬೀಸುತ್ತಿದ್ದದರಿಂದ ತೆರೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು.</verse>
				<verse number="25">ರಾತ್ರಿ ಮೂರು ಗಂಟೆಯಲ್ಲಿ ಯೇಸು ಸರೋವರದ ಮೇಲೆ, ನಡೆಯುತ್ತಾ ಶಿಷ್ಯರ ಬಳಿಗೆ ಬಂದರು.</verse>
				<verse number="26">ಯೇಸು ಸರೋವರದ ಮೇಲೆ ನಡೆಯುವುದನ್ನು ಶಿಷ್ಯರು ಕಂಡು ಕಳವಳಪಟ್ಟು, “ಅದು ಭೂತ,” ಎಂದು ಭೀತಿಯಿಂದ ಕೂಗಿಕೊಂಡರು.</verse>
				<verse number="27">ಯೇಸು ತಕ್ಷಣವೇ ಅವರಿಗೆ, “ಧೈರ್ಯವಾಗಿರಿ, ನಾನೇ, ಭಯಪಡಬೇಡಿರಿ,” ಎಂದರು.</verse>
				<verse number="28">ಆಗ ಪೇತ್ರನು ಯೇಸುವಿಗೆ, “ಸ್ವಾಮೀ, ನೀವೇ ಆಗಿದ್ದರೆ, ನೀರಿನ ಮೇಲೆ ನಡೆದು ನಿಮ್ಮ ಬಳಿಗೆ ಬರಲು ನನಗೆ ಅಪ್ಪಣೆಕೊಡಿರಿ,” ಎಂದನು.</verse>
				<verse number="29">ಅದಕ್ಕೆ ಯೇಸು, “ಬಾ,” ಎಂದರು. ಆಗ ಪೇತ್ರನು ದೋಣಿಯಿಂದ ಇಳಿದು, ಯೇಸುವಿನ ಬಳಿಗೆ ಹೋಗುವುದಕ್ಕಾಗಿ ನೀರಿನ ಮೇಲೆ ನಡೆದನು.</verse>
				<verse number="30">ಆದರೆ ಬಲವಾದ ಗಾಳಿಯನ್ನು ಕಂಡು, ಅವನು ಭಯಪಟ್ಟು ಮುಳುಗುತ್ತಾ, “ಸ್ವಾಮಿ, ನನ್ನನ್ನು ಕಾಪಾಡಿರಿ!” ಎಂದು ಕೂಗಿ ಹೇಳಿದನು.</verse>
				<verse number="31">ತಕ್ಷಣವೇ ಯೇಸು ತಮ್ಮ ಕೈಯನ್ನು ಚಾಚಿ ಪೇತ್ರನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ, ನೀನು ಏಕೆ ಸಂದೇಹಪಟ್ಟೆ?” ಎಂದರು.</verse>
				<verse number="32">ಅವರು ದೋಣಿ ಹತ್ತಿದಾಗ, ಗಾಳಿ ನಿಂತುಹೋಯಿತು.</verse>
				<verse number="33">ದೋಣಿಯಲ್ಲಿದ್ದವರು ಯೇಸುವಿನ ಬಳಿಗೆ ಬಂದು ಅವರನ್ನು ಆರಾಧಿಸಿ, “ನಿಜವಾಗಿಯೂ ನೀವು ದೇವಪುತ್ರ,” ಎಂದು ಹೇಳಿದರು.</verse>
				<verse number="34">ಅವರು ಸರೋವರವನ್ನು ದಾಟಿ, ಗೆನೆಜರೇತ್ ಊರಿಗೆ ಬಂದರು.</verse>
				<verse number="35">ಆಗ ಅಲ್ಲಿದ್ದ ಜನರು ಯೇಸುವಿನ ಗುರುತು ಹಿಡಿದು, ಸುತ್ತುಮುತ್ತಲಿನ ಊರುಗಳಿಗೆಲ್ಲಾ ಹೇಳಿ ಕಳುಹಿಸಿ, ರೋಗಿಗಳನ್ನೆಲ್ಲಾ ಯೇಸುವಿನ ಬಳಿಗೆ ತಂದರು.</verse>
				<verse number="36">ಅವರು ಯೇಸುವಿನ ಉಡುಪಿನ ಅಂಚನ್ನಾದರೂ ಸ್ಪರ್ಶಿಸಬೇಕೆಂದು ಅವರನ್ನು ಬೇಡಿಕೊಂಡರು. ಯೇಸುವನ್ನು ಮುಟ್ಟಿದವರೆಲ್ಲರೂ ಸ್ವಸ್ಥರಾದರು.</verse>
			</chapter>
			<chapter number="15">
				<verse number="1">ಯೆರೂಸಲೇಮಿನಿಂದ ಫರಿಸಾಯರು ಮತ್ತು ನಿಯಮ ಬೋಧಕರು ಯೇಸುವಿನ ಬಳಿಗೆ ಬಂದು,</verse>
				<verse number="2">“ನಿನ್ನ ಶಿಷ್ಯರು ಪೂರ್ವಿಕರ ಸಂಪ್ರದಾಯವನ್ನು ಏಕೆ ಮೀರುತ್ತಾರೆ? ಅವರು ಊಟಕ್ಕೆ ಮುಂಚೆ ತಮ್ಮ ಕೈಗಳನ್ನು ಏಕೆ ತೊಳೆದುಕೊಳ್ಳುವುದಿಲ್ಲ?” ಎಂದರು.</verse>
				<verse number="3">ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ನೀವು ದೇವರ ಆಜ್ಞೆಯನ್ನು ಏಕೆ ಮೀರುತ್ತೀರಿ?</verse>
				<verse number="4">‘ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು,’ ಎಂದೂ ‘ತಂದೆತಾಯಿಗಳನ್ನು ದೂಷಿಸುವವನಿಗೆ ಮರಣದಂಡನೆ ಆಗಬೇಕು,’ ಎಂದು ದೇವರು ಹೇಳಿದ್ದಾರೆ.</verse>
				<verse number="5">ಆದರೆ ನೀವು, ಯಾರಾದರೂ ತನ್ನ ತಂದೆಗೆ ಇಲ್ಲವೆ ತಾಯಿಗೆ, ನಾನು ನಿಮ್ಮ ಸಹಾಯಕ್ಕಾಗಿ ಇಟ್ಟಿದ್ದನ್ನು, ‘ದೇವರಿಗೆ ಕೊಟ್ಟಿದ್ದೇನೆ’ ಎಂದು ಹೇಳುವುದಾದರೆ,</verse>
				<verse number="6">‘ಅವನು ತನ್ನ ತಂದೆಯನ್ನಾಗಲಿ ತಾಯಿಯನ್ನಾಗಲಿ ಗೌರವಿಸಬೇಕಾಗಿಲ್ಲ’ ಎಂದು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ.</verse>
				<verse number="7">ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ:</verse>
				<verse number="8">“ ‘ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ, ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.</verse>
				<verse number="9">ಅವರು ಮನುಷ್ಯರ ಆಜ್ಞೆಗಳನ್ನು ಉಪದೇಶಗಳನ್ನಾಗಿ ಬೋಧಿಸುವುದರಿಂದ ನನ್ನನ್ನು ಆರಾಧಿಸುವುದು ವ್ಯರ್ಥ.’ ”</verse>
				<verse number="10">ಯೇಸು ಜನಸಮೂಹವನ್ನು ಕರೆದು ಅವರಿಗೆ, “ಕೇಳಿ ತಿಳಿದುಕೊಳ್ಳಿರಿ.</verse>
				<verse number="11">ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಅಶುದ್ಧ ಮಾಡುವುದಿಲ್ಲ, ಆದರೆ ಬಾಯೊಳಗಿಂದ ಹೊರಗೆ ಬರುವಂಥದ್ದೇ ಮನುಷ್ಯನನ್ನು ಅಶುದ್ಧ ಮಾಡುತ್ತದೆ,” ಎಂದು ಹೇಳಿದರು.</verse>
				<verse number="12">ತರುವಾಯ ಯೇಸುವಿನ ಶಿಷ್ಯರು ಬಂದು, “ಫರಿಸಾಯರು ನಿಮ್ಮ ಈ ಮಾತನ್ನು ಕೇಳಿ ಬೇಸರಗೊಂಡರೆಂದು ನಿಮಗೆ ತಿಳಿಯಿತೇ?” ಎಂದು ಕೇಳಿದರು.</verse>
				<verse number="13">ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ಪರಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊಂದು ಗಿಡವು ಬೇರುಸಹಿತವಾಗಿ ಕಿತ್ತುಹಾಕಲಾಗುವುದು.</verse>
				<verse number="14">ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿತೋರಿಸುವ ಕುರುಡರು. ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಹಳ್ಳಕ್ಕೆ ಬೀಳುವರು,” ಎಂದು ಹೇಳಿದರು.</verse>
				<verse number="15">ಪೇತ್ರನು, “ಈ ಸಾಮ್ಯವನ್ನು ನಮಗೆ ವಿವರಿಸು,” ಎಂದನು.</verse>
				<verse number="16">ಅದಕ್ಕೆ ಯೇಸು, “ನೀವು ಸಹ ಇನ್ನೂ ಬುದ್ಧಿಯಿಲ್ಲದವರಾಗಿದ್ದೀರಾ?” ಎಂದು ಕೇಳಿ,</verse>
				<verse number="17">“ಬಾಯೊಳಕ್ಕೆ ಹೋಗಿ ಹೊಟ್ಟೆಯಲ್ಲಿ ಸೇರುವುದೆಲ್ಲವೂ ವಿಸರ್ಜಿತವಾಗುವುದೆಂದು ನೀವು ಇನ್ನೂ ಗ್ರಹಿಸಲಿಲ್ಲವೋ?</verse>
				<verse number="18">ಆದರೆ ಬಾಯೊಳಗಿಂದ ಹೊರಗೆ ಹೊರಡುವಂಥವು ಹೃದಯದೊಳಗಿಂದ ಬಂದು ಮನುಷ್ಯನನ್ನು ಅಶುದ್ಧ ಮಾಡುತ್ತವೆ.</verse>
				<verse number="19">ಏಕೆಂದರೆ ಹೃದಯದೊಳಗಿಂದ ದುರಾಲೋಚನೆಗಳು, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ದೂರು ಇವು ಹೊರ ಬರುತ್ತವೆ.</verse>
				<verse number="20">ಇವುಗಳೇ ಮನುಷ್ಯನನ್ನು ಅಶುದ್ಧ ಮಾಡುತ್ತವೆ; ಆದರೆ ಕೈತೊಳೆದುಕೊಳ್ಳದೆ ಊಟಮಾಡುವುದು ಮನುಷ್ಯನನ್ನು ಅಶುದ್ಧ ಮಾಡುವುದಿಲ್ಲ,” ಎಂದರು.</verse>
				<verse number="21">ಯೇಸು ಅಲ್ಲಿಂದ ಹೊರಟು ಟೈರ್ ಸೀದೋನ್ ಪ್ರದೇಶಕ್ಕೆ ಬಂದರು.</verse>
				<verse number="22">ಆಗ, ಕಾನಾನ್ಯ ಸ್ತ್ರೀಯೊಬ್ಬಳು ಬಂದು ಅವರಿಗೆ, “ಸ್ವಾಮೀ, ದಾವೀದನ ಪುತ್ರನೇ, ನನ್ನನ್ನು ಕರುಣಿಸು. ನನ್ನ ಮಗಳು ದೆವ್ವದ ಕಾಟದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ,” ಎಂದು ಕೂಗಿಕೊಂಡಳು.</verse>
				<verse number="23">ಆದರೆ ಯೇಸು ಆಕೆಗೆ ಉತ್ತರ ಕೊಡಲಿಲ್ಲ. ಆಗ ಶಿಷ್ಯರು ಯೇಸುವಿನ ಬಳಿ ಬಂದು, “ಆಕೆಯನ್ನು ಕಳುಹಿಸಿಬಿಡು, ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ” ಎಂದು ಕೇಳಿಕೊಂಡರು.</verse>
				<verse number="24">ಯೇಸು ಉತ್ತರವಾಗಿ, “ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಮಾತ್ರ ನನ್ನನ್ನು ಕಳುಹಿಸಲಾಗಿದೆ,” ಎಂದರು.</verse>
				<verse number="25">ಆಕೆಯು ಬಂದು ಯೇಸುವಿನ ಮುಂದೆ ಮೊಣಕಾಲೂರಿ, “ಸ್ವಾಮೀ, ನನಗೆ ಸಹಾಯಮಾಡು!” ಎಂದು ಕೇಳಿಕೊಂಡಳು.</verse>
				<verse number="26">ಆಗ ಯೇಸು, “ಮಕ್ಕಳು ತಿನ್ನುವ ರೊಟ್ಟಿಯನ್ನು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ,” ಎಂದು ಹೇಳಿದರು.</verse>
				<verse number="27">ಆಗ ಆಕೆಯು, “ಸ್ವಾಮೀ, ಅದು ನಿಜವೇ, ಆದರೂ ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿತುಂಡುಗಳನ್ನು ನಾಯಿಮರಿಗಳು ತಿನ್ನುತ್ತವಲ್ಲಾ,” ಎಂದಳು.</verse>
				<verse number="28">ಯೇಸು ಉತ್ತರವಾಗಿ ಆಕೆಗೆ, “ಅಮ್ಮಾ ನಿನ್ನ ನಂಬಿಕೆಯು ದೊಡ್ಡದು! ನೀನು ಇಷ್ಟಪಟ್ಟಂತೆಯೇ ನಿನಗಾಗಲಿ,” ಎಂದು ಹೇಳಿದರು. ಆಕೆಯ ಮಗಳು ಅದೇ ಗಳಿಗೆಯಲ್ಲಿ ಗುಣಹೊಂದಿದಳು.</verse>
				<verse number="29">ಯೇಸು ಅಲ್ಲಿಂದ ಹೊರಟು ಗಲಿಲಾಯ ಸರೋವರದ ಸಮೀಪಕ್ಕೆ ಬಂದು, ಬೆಟ್ಟವನ್ನು ಹತ್ತಿ ಅಲ್ಲಿ ಕುಳಿತುಕೊಂಡರು.</verse>
				<verse number="30">ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು, ಕುರುಡರನ್ನು, ಮೂಕರನ್ನು, ಊನವಾದವರನ್ನು ಮತ್ತು ಬೇರೆ ಅನೇಕ ರೋಗಿಗಳನ್ನು ತಮ್ಮೊಂದಿಗೆ ಕರೆದುಕೊಂಡು ಬಂದು ಯೇಸುವಿನ ಪಾದದ ಬಳಿಯಲ್ಲಿ ಬಿಟ್ಟರು. ಯೇಸು ಅವರನ್ನೆಲ್ಲಾ ಸ್ವಸ್ಥಪಡಿಸಿದರು.</verse>
				<verse number="31">ಮೂಕರು ಮಾತನಾಡುವುದನ್ನೂ ಊನವಾದವರು ಸ್ವಸ್ಥರಾಗಿರುವುದನ್ನೂ ಕುಂಟರು ನಡೆದಾಡುವುದನ್ನೂ ಕುರುಡರು ಕಾಣುವುದನ್ನೂ ಜನಸಮೂಹದವರು ಕಂಡು ಆಶ್ಚರ್ಯಪಟ್ಟರು. ಅವರು ಇಸ್ರಾಯೇಲಿನ ದೇವರನ್ನು ಕೊಂಡಾಡಿದರು.</verse>
				<verse number="32">ಯೇಸು ತಮ್ಮ ಶಿಷ್ಯರನ್ನು ಕರೆದು, “ನಾನು ಈ ಜನಸಮೂಹವನ್ನು ನೋಡಿ ಕನಿಕರಪಡುತ್ತೇನೆ. ಮೂರು ದಿನಗಳಿಂದ ಇವರು ನನ್ನೊಂದಿಗಿದ್ದಾರೆ. ಇವರಿಗೆ ಊಟಕ್ಕೆ ಏನೂ ಇಲ್ಲ, ದಾರಿಯಲ್ಲಿ ಅವರು ಬಳಲಿ ಹೋಗುವರು. ಇವರನ್ನು ಉಪವಾಸವಾಗಿ ಕಳುಹಿಸುವುದಕ್ಕೆ ನನಗೆ ಮನಸ್ಸಿಲ್ಲ,” ಎಂದರು.</verse>
				<verse number="33">ಅದಕ್ಕೆ ಶಿಷ್ಯರು, “ಇಂಥಾ ದೊಡ್ಡ ಸಮೂಹವನ್ನು ತೃಪ್ತಿಪಡಿಸುವಂತೆ ಈ ನಿರ್ಜನ ಪ್ರದೇಶದಲ್ಲಿ ನಮಗೆ ಎಲ್ಲಿಂದ ರೊಟ್ಟಿ ಸಿಕ್ಕೀತು?” ಎಂದರು.</verse>
				<verse number="34">ಯೇಸು ಅವರಿಗೆ, “ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದರು. ಶಿಷ್ಯರು, “ಏಳು ರೊಟ್ಟಿಗಳು ಮತ್ತು ಕೆಲವು ಸಣ್ಣ ಮೀನುಗಳಿವೆ,” ಎಂದರು.</verse>
				<verse number="35">ಯೇಸು ಜನಸಮೂಹವು ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟರು.</verse>
				<verse number="36">ಅನಂತರ ಯೇಸು ಆ ಏಳು ರೊಟ್ಟಿಗಳನ್ನು ಮತ್ತು ಮೀನುಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ, ಅವುಗಳನ್ನು ಮುರಿದು ತಮ್ಮ ಶಿಷ್ಯರಿಗೆ ಕೊಡಲು ಶಿಷ್ಯರು ಜನಸಮೂಹಕ್ಕೆ ಕೊಟ್ಟರು.</verse>
				<verse number="37">ಅವರೆಲ್ಲರೂ ಊಟಮಾಡಿ ತೃಪ್ತರಾದರು. ಅನಂತರ ಶಿಷ್ಯರು ಮಿಕ್ಕ ತುಂಡುಗಳನ್ನು ಕೂಡಿಸಲಾಗಿ ಏಳು ಬುಟ್ಟಿಗಳು ತುಂಬಿದವು.</verse>
				<verse number="38">ಊಟಮಾಡಿದವರು ಸ್ತ್ರೀಯರೂ ಮಕ್ಕಳೂ ಅಲ್ಲದೆ ನಾಲ್ಕು ಸಾವಿರ ಗಂಡಸರಿದ್ದರು.</verse>
				<verse number="39">ತರುವಾಯ ಯೇಸು ಜನಸಮೂಹವನ್ನು ಕಳುಹಿಸಿಬಿಟ್ಟು ದೋಣಿಯನ್ನು ಹತ್ತಿ ಮಗದಾನ್ ಊರಿಗೆ ಬಂದರು.</verse>
			</chapter>
			<chapter number="16">
				<verse number="1">ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, ಪರಲೋಕದಿಂದ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಕೇಳಿದರು.</verse>
				<verse number="2">ಯೇಸು ಉತ್ತರವಾಗಿ ಅವರಿಗೆ, “ಸಂಜೆಯಾದಾಗ ಆಕಾಶವು ಕೆಂಪಾಗಿದ್ದರೆ, ‘ಒಳ್ಳೆಯ ಹವಾಮಾನ ಇರುವುದು’ ಎಂದೂ</verse>
				<verse number="3">ಬೆಳಿಗ್ಗೆ ಆಕಾಶವು ಮೋಡ ಕವಿದು ಕೆಂಪಾಗಿದ್ದರೆ, ‘ಇಂದು ಬಿರುಗಾಳಿ ಇರುವುದು’ ಎಂದೂ ನೀವು ಹೇಳುತ್ತೀರಿ. ಆಕಾಶದಲ್ಲಾಗುವ ಸೂಚನೆಗಳನ್ನು ನೀವು ಗ್ರಹಿಸಬಲ್ಲಿರಿ, ಆದರೆ ಕಾಲದ ಸೂಚನೆಗಳನ್ನು ನೀವು ಗ್ರಹಿಸಲಾರಿರಿ.</verse>
				<verse number="4">ವ್ಯಭಿಚಾರಿಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ, ಆದರೆ ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಸಿಕ್ಕುವುದಿಲ್ಲ,” ಎಂದು ಹೇಳಿ, ಯೇಸು ಅವರನ್ನು ಬಿಟ್ಟು ಹೊರಟು ಹೋದರು.</verse>
				<verse number="5">ಶಿಷ್ಯರು ರೊಟ್ಟಿಬುತ್ತಿಯನ್ನು ಕಟ್ಟಿಕೊಳ್ಳುವುದನ್ನು ಮರೆತು ಆಚೆದಡಕ್ಕೆ ಬಂದಿದ್ದರು.</verse>
				<verse number="6">ಆಗ ಯೇಸು ಅವರಿಗೆ, “ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ಬಗ್ಗೆ ಎಚ್ಚರಿಕೆ ವಹಿಸಿ ಜಾಗರೂಕರಾಗಿರಿ,” ಎಂದು ಹೇಳಿದರು.</verse>
				<verse number="7">ಅದಕ್ಕೆ ಅವರು ತಮ್ಮತಮ್ಮಲ್ಲಿಯೇ, “ನಾವು ರೊಟ್ಟಿ ತಂದಿಲ್ಲವೆಂದು ಹೀಗೆ ಹೇಳುತ್ತಾರೆ,” ಎಂದು ಮಾತನಾಡಿಕೊಂಡರು.</verse>
				<verse number="8">ಯೇಸು ಅವರು ಮಾತನಾಡಿದ್ದನ್ನು ತಿಳಿದುಕೊಂಡು ಅವರಿಗೆ, “ಅಲ್ಪ ವಿಶ್ವಾಸದವರೇ, ನೀವು ರೊಟ್ಟಿ ಇಲ್ಲವೆಂದು ನಿಮ್ಮಲ್ಲಿ ಏಕೆ ಮಾತನಾಡಿಕೊಳ್ಳುತ್ತೀರಿ?</verse>
				<verse number="9">ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದಾಗ, ಎಷ್ಟು ಬುಟ್ಟಿಗಳನ್ನು ತುಂಬಿದಿರೆಂದು ನೀವು ಇನ್ನೂ ಗ್ರಹಿಸಲಿಲ್ಲವೇ? ನಿಮಗೆ ನೆನಪಿಲ್ಲವೇ?</verse>
				<verse number="10">ಇದಲ್ಲದೆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದಾಗ ಎಷ್ಟು ಬುಟ್ಟಿಗಳನ್ನು ತುಂಬಿದಿರಿ?</verse>
				<verse number="11">ನಾನು ರೊಟ್ಟಿಯ ವಿಷಯದಲ್ಲಿ ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಎಚ್ಚರವಾಗಿರಬೇಕೆಂದು ಹೇಳಿದ್ದನ್ನು ನೀವು ಗ್ರಹಿಸದೆ ಇರುವುದು ಹೇಗೆ?” ಎಂದು ಕೇಳಿದರು.</verse>
				<verse number="12">ಆಗ ಅವರು, ರೊಟ್ಟಿ ಹುಳಿಯ ವಿಷಯದಲ್ಲಿ ಅಲ್ಲ, ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯದಲ್ಲಿ ತಾವು ಎಚ್ಚರವಾಗಿರಬೇಕೆಂದು ಯೇಸು ಹೇಳಿದ್ದನ್ನು ಗ್ರಹಿಸಿಕೊಂಡರು.</verse>
				<verse number="13">ಯೇಸು ಕೈಸರೈಯ ಫಿಲಿಪ್ಪಿ ಪ್ರಾಂತಗಳಿಗೆ ಬಂದಾಗ ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನನ್ನು ಯಾರೆಂದು ಜನರು ಹೇಳುತ್ತಾರೆ?” ಎಂದು ಕೇಳಿದರು.</verse>
				<verse number="14">ಅದಕ್ಕೆ ಅವರು, “ಕೆಲವರು ಸ್ನಾನಿಕನಾದ ಯೋಹಾನನು ಎಂದು ಹೇಳುತ್ತಾರೆ, ಇನ್ನು ಕೆಲವರು ಎಲೀಯನು ಎನ್ನುತ್ತಾರೆ, ಬೇರೆಯವರು ಯೆರೆಮೀಯನು, ಇಲ್ಲವೆ ಪ್ರವಾದಿಗಳಲ್ಲಿ ಒಬ್ಬನು ಎಂದು ಹೇಳುತ್ತಾರೆ” ಎಂದರು.</verse>
				<verse number="15">ಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಿದರು.</verse>
				<verse number="16">ಅದಕ್ಕೆ ಸೀಮೋನ ಪೇತ್ರನು ಉತ್ತರವಾಗಿ, “ನೀವು ಕ್ರಿಸ್ತ ಮತ್ತು ಜೀವಂತ ದೇವರ ಪುತ್ರರಾಗಿದ್ದೀರಿ,” ಎಂದು ಉತ್ತರಕೊಟ್ಟನು.</verse>
				<verse number="17">ಯೇಸು ಅವನಿಗೆ, “ಯೋನನ ಮಗ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದನ್ನು ಪ್ರಕಟಿಸಿದ್ದು ಮಾನವರಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನು ನಿನಗೆ ಪ್ರಕಟಿಸಿದರು.</verse>
				<verse number="18">ನಾನು ಸಹ ನಿನಗೆ ಹೇಳುವುದೇನಂದರೆ, ನೀನು ಪೇತ್ರನು. ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು. ಪಾತಾಳದ ದ್ವಾರಗಳು ಅದನ್ನು ಜಯಿಸಲಾರವು.</verse>
				<verse number="19">ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುವೆನು; ನೀನು ಭೂಮಿಯಲ್ಲಿ ಯಾವುದನ್ನು ಬಂಧಿಸುತ್ತೀಯೋ ಅದು ಪರಲೋಕದಲ್ಲಿಯೂ ಬಂಧಿತವಾಗುವುದು. ನೀನು ಭೂಮಿಯಲ್ಲಿ ಏನನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲಾಗುವುದು,” ಎಂದರು.</verse>
				<verse number="20">ತರುವಾಯ ಯೇಸು, ತಾನೇ ಕ್ರಿಸ್ತ ಎಂಬುದನ್ನು ಯಾರಿಗೂ ಹೇಳಬಾರದೆಂದು ತಮ್ಮ ಶಿಷ್ಯರಿಗೆ ಆಜ್ಞಾಪಿಸಿದರು.</verse>
				<verse number="21">ತಾವು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ಬಹು ಕಷ್ಟಗಳನ್ನು ಅನುಭವಿಸಿ ಕೊಲೆಗೀಡಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಎದ್ದು ಬರುವುದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತಮ್ಮ ಶಿಷ್ಯರಿಗೆ ತಿಳಿಸಲಾರಂಭಿಸಿದರು.</verse>
				<verse number="22">ಆಗ ಪೇತ್ರನು ಯೇಸುವಿನ ಕೈಹಿಡಿದು, “ಹಾಗೆ ಆಗಬಾರದು ಸ್ವಾಮೀ! ಅದು ನಿಮಗೆ ಎಂದಿಗೂ ಸಂಭವಿಸಬಾರದು!” ಎಂದು ಹೇಳಿ ಯೇಸುವನ್ನು ಗದರಿಸಲಾರಂಭಿಸಿದನು.</verse>
				<verse number="23">ಆಗ ಯೇಸು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನಿಂದ ತೊಲಗಿಹೋಗು! ನೀನು ನನಗೆ ಅಡ್ಡಿಯಾಗಿದ್ದೀ; ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದರು.</verse>
				<verse number="24">ತರುವಾಯ ಯೇಸು ತಮ್ಮ ಶಿಷ್ಯರಿಗೆ, “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ತಾವೇ ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.</verse>
				<verse number="25">ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವವರು ಅದನ್ನು ಕಳೆದುಕೊಳ್ಳುವರು, ಆದರೆ ನನ್ನ ನಿಮಿತ್ತವಾಗಿ ಯಾರಾದರೂ ತಮ್ಮ ಪ್ರಾಣವನ್ನು ಕಳೆದುಕೊಳ್ಳುವವರು ಅದನ್ನು ಕಂಡುಕೊಳ್ಳುವರು.</verse>
				<verse number="26">ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು? ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?</verse>
				<verse number="27">ಮನುಷ್ಯಪುತ್ರನಾದ ನಾನು ನನ್ನ ತಂದೆಯ ಮಹಿಮೆಯಲ್ಲಿ ನನ್ನ ದೂತರೊಡನೆ ಬಂದಾಗ, ನಾನು ಪ್ರತಿಯೊಬ್ಬರಿಗೂ ಅವರವರ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವೆನು.</verse>
				<verse number="28">“ನಿಮಗೆ ನಿಜವಾಗಿ ಹೇಳುತ್ತೇನೆ: ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಪುತ್ರನಾದ ನಾನು ನನ್ನ ರಾಜ್ಯದಲ್ಲಿ ಬರುವುದನ್ನು ಕಾಣುವವರೆಗೆ ಮರಣವನ್ನು ಹೊಂದುವುದೇ ಇಲ್ಲ,” ಎಂದರು.</verse>
			</chapter>
			<chapter number="17">
				<verse number="1">ಯೇಸು ಆರು ದಿನಗಳಾದ ಮೇಲೆ ಪೇತ್ರ, ಯಾಕೋಬ, ಅವನ ಸಹೋದರ ಯೋಹಾನನನ್ನೂ ಪ್ರತ್ಯೇಕವಾಗಿ ಕರೆದುಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದರು.</verse>
				<verse number="2">ಅಲ್ಲಿ ಯೇಸು ಅವರ ಮುಂದೆ ರೂಪಾಂತರಗೊಂಡರು. ಅವರ ಮುಖವು ಸೂರ್ಯನಂತೆ ಪ್ರಕಾಶಿಸಿತು. ಅವರ ಉಡುಪು ಬೆಳಕಿನಂತೆ ಬೆಳಗಿತು.</verse>
				<verse number="3">ಇದಲ್ಲದೆ ಮೋಶೆಯೂ ಎಲೀಯನೂ ಅವರಿಗೆ ಕಾಣಿಸಿಕೊಂಡು ಯೇಸುವಿನೊಂದಿಗೆ ಮಾತನಾಡುತ್ತಿದ್ದರು.</verse>
				<verse number="4">ಪೇತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲಿಯೇ ಇರುವುದು ಒಳ್ಳೆಯದು. ನಿಮಗೆ ಮನಸ್ಸಿದ್ದರೆ ನಾನು ನಿಮಗೊಂದು, ಮೋಶೆಗೊಂದು, ಎಲೀಯನಿಗೊಂದರಂತೆ ಮೂರು ಗುಡಾರಗಳನ್ನು ಕಟ್ಟುವೆನು,” ಎಂದು ಹೇಳಿದನು.</verse>
				<verse number="5">ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು.</verse>
				<verse number="6">ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು.</verse>
				<verse number="7">ಆಗ ಯೇಸು ಬಂದು ಅವರನ್ನು ಮುಟ್ಟಿ, “ಏಳಿರಿ, ಹೆದರಬೇಡಿರಿ,” ಎಂದು ಹೇಳಿದರು.</verse>
				<verse number="8">ಅವರು ತಮ್ಮ ಕಣ್ಣೆತ್ತಿ ನೋಡಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ಕಾಣಲಿಲ್ಲ.</verse>
				<verse number="9">ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಯೇಸು ಅವರಿಗೆ, “ಮನುಷ್ಯಪುತ್ರನಾದ ನಾನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದು,” ಎಂದು ಅವರಿಗೆ ಆಜ್ಞಾಪಿಸಿದರು.</verse>
				<verse number="10">ಆಗ ಯೇಸುವಿನ ಶಿಷ್ಯರು ಅವರಿಗೆ, “ಎಲೀಯನು ಮೊದಲು ಬರುವುದು ಅಗತ್ಯವೆಂದು ನಿಯಮ ಬೋಧಕರು ಏಕೆ ಹೇಳುತ್ತಾರೆ?” ಎಂದು ಕೇಳಿದರು.</verse>
				<verse number="11">ಯೇಸು ಉತ್ತರವಾಗಿ ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವುಗಳನ್ನು ಪುನಃ ಸ್ಥಾಪಿಸುವುದು ನಿಜವೇ.</verse>
				<verse number="12">ಆದರೆ ಎಲೀಯನು ಆಗಲೇ ಬಂದಾಯಿತು; ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಪುತ್ರನಾದ ನಾನು ಸಹ ಅವರಿಂದ ಕಷ್ಟವನ್ನು ಅನುಭವಿಸುವೆನು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.</verse>
				<verse number="13">ಸ್ನಾನಿಕ ಯೋಹಾನನ ವಿಷಯದಲ್ಲಿ ಯೇಸು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.</verse>
				<verse number="14">ಅವರು ಜನಸಮೂಹದ ಬಳಿಗೆ ಬಂದಾಗ, ಒಬ್ಬ ಮನುಷ್ಯನು ಯೇಸುವಿನ ಬಳಿಗೆ ಬಂದು ಮೊಣಕಾಲೂರಿ,</verse>
				<verse number="15">“ಕರ್ತನೇ, ನನ್ನ ಮಗನ ಮೇಲೆ ಕರುಣೆಯಿಡು. ಏಕೆಂದರೆ ಅವನು ಮೂರ್ಛಾರೋಗದಿಂದ ಬಹಳವಾಗಿ ಕಷ್ಟಪಡುತ್ತಾನೆ. ಅನೇಕ ಸಾರಿ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಬೀಳುತ್ತಾನೆ.</verse>
				<verse number="16">ನಾನು ಅವನನ್ನು ನಿಮ್ಮ ಶಿಷ್ಯರ ಬಳಿಗೆ ಕರೆತಂದೆನು. ಆದರೆ ಅವರು ಅವನನ್ನು ಸ್ವಸ್ಥ ಮಾಡದೆ ಹೋದರು,” ಎಂದು ಹೇಳಿದನು.</verse>
				<verse number="17">ಆಗ ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಇನ್ನೂ ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.</verse>
				<verse number="18">ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಹುಡುಗನೊಳಗಿಂದ ಹೊರಟುಹೋಯಿತು. ಆಗ ಆ ಹುಡುಗನು ಅದೇ ಗಳಿಗೆಯಲ್ಲಿಯೇ ಗುಣಮುಖನಾದನು.</verse>
				<verse number="19">ತರುವಾಯ ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಅದನ್ನು ಓಡಿಸುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು.</verse>
				<verse number="20">ಯೇಸು ಅವರಿಗೆ, “ನಿಮ್ಮ ಅಪೂರ್ಣನಂಬಿಕೆಯೇ ಇದಕ್ಕೆ ಕಾರಣ. ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಆ ಸ್ಥಳಕ್ಕೆ ಹೋಗು’ ಎಂದು ಹೇಳಿದರೆ ಅದು ಹೋಗುವುದು. ಯಾವುದೂ ನಿಮಗೆ ಅಸಾಧ್ಯವಾಗಿರುವುದಿಲ್ಲ.</verse>
				<verse number="21">ಆದರೂ ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಈ ರೀತಿಯಾದ ದೆವ್ವ ಹೊರಟು ಹೋಗುವುದಿಲ್ಲ,” ಎಂದರು.</verse>
				<verse number="22">ಅವರು ಗಲಿಲಾಯದಲ್ಲಿ ಒಟ್ಟಿಗೆ ಸೇರಿದ್ದಾಗ ಯೇಸು ಅವರಿಗೆ, “ಮನುಷ್ಯಪುತ್ರನಾದ ನನ್ನನ್ನು ಜನರ ಕೈಗಳಿಗೆ ಒಪ್ಪಿಸಿಕೊಡಲಾಗುವುದು.</verse>
				<verse number="23">ಅವರು ನನ್ನನ್ನು ಕೊಲ್ಲುವರು, ಆದರೆ ಮೂರನೆಯ ದಿನದಲ್ಲಿ ನಾನು ತಿರುಗಿ ಜೀವಿತನಾಗಿ ಎದ್ದು ಬರುವೆನು,” ಎಂದು ಹೇಳಿದರು. ಅದಕ್ಕೆ ಶಿಷ್ಯರು ಬಹಳ ದುಃಖಪಟ್ಟರು.</verse>
				<verse number="24">ತರುವಾಯ ಯೇಸು ಕಪೆರ್ನೌಮಿಗೆ ಬಂದಾಗ, ದೇವಾಲಯದ ತೆರಿಗೆಗಾಗಿ ಎರಡು ಬೆಳ್ಳಿ ನಾಣ್ಯಗಳನ್ನು ವಸೂಲಿಮಾಡುವವರು ಪೇತ್ರನ ಬಳಿಗೆ ಬಂದರು. ಅವರು ಪೇತ್ರನಿಗೆ, “ನಿಮ್ಮ ಬೋಧಕನು ತೆರಿಗೆ ಕಟ್ಟುವುದಿಲ್ಲವೋ?” ಎಂದು ಕೇಳಿದರು.</verse>
				<verse number="25">ಅದಕ್ಕೆ ಪೇತ್ರನು, “ಹೌದು, ಕಟ್ಟುತ್ತಾರೆ,” ಎಂದನು. ಅವನು ಮನೆಯೊಳಕ್ಕೆ ಬಂದಾಗ ಯೇಸು ಮುಂದಾಗಿಯೇ ಅವನಿಗೆ, “ಸೀಮೋನನೇ ನಿನಗೆ ಹೇಗೆ ತೋರುತ್ತದೆ? ಭೂಲೋಕದ ರಾಜರು ಯಾರಿಂದ ಕಂದಾಯವನ್ನು ಇಲ್ಲವೆ ತೆರಿಗೆಯನ್ನು ವಸೂಲಿ ಮಾಡುತ್ತಾರೆ? ತಮ್ಮ ಪುತ್ರರಿಂದಲೋ ಇಲ್ಲವೆ ಪರರಿಂದಲೋ?” ಎಂದು ಕೇಳಿದರು.</verse>
				<verse number="26">“ಪರರಿಂದ,” ಎಂದು ಪೇತ್ರನು ಹೇಳಿದನು. ಯೇಸು ಅವನಿಗೆ, “ಹಾಗಾದರೆ ಪುತ್ರನು ಕಟ್ಟಬೇಕಾಗಿಲ್ಲ.</verse>
				<verse number="27">ಆದರೂ ನಾವು ಅವರನ್ನು ಅಭ್ಯಂತರಪಡಿಸದಂತೆ, ನೀನು ಸರೋವರಕ್ಕೆ ಹೋಗಿ ಗಾಳವನ್ನು ಹಾಕು. ಆಗ ಮೊದಲು ಬರುವ ಮೀನನ್ನು ಹಿಡಿ. ನೀನು ಅದರ ಬಾಯನ್ನು ತೆರೆದಾಗ ಅದರಲ್ಲಿ ನಾಲ್ಕು ಬೆಳ್ಳಿ ನಾಣ್ಯಗಳನ್ನು ಕಾಣುವೆ. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದು ಹೇಳಿದರು.</verse>
			</chapter>
			<chapter number="18">
				<verse number="1">ಅದೇ ಸಮಯದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವನು ಯಾರು?” ಎಂದು ಕೇಳಿದರು.</verse>
				<verse number="2">ಆಗ ಯೇಸು ಒಂದು ಚಿಕ್ಕ ಮಗುವನ್ನು ತಮ್ಮ ಬಳಿಗೆ ಕರೆದು, ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ,</verse>
				<verse number="3">“ನೀವು ಪರಿವರ್ತನೆ ಹೊಂದಿ ಚಿಕ್ಕಮಕ್ಕಳಂತೆ ಆಗದಿದ್ದರೆ, ಪರಲೋಕ ರಾಜ್ಯದೊಳಗೆ ಪ್ರವೇಶಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.</verse>
				<verse number="4">ಯಾರು ಈ ಚಿಕ್ಕಮಗುವಿನಂತೆ ತಮ್ಮನ್ನು ತಾವು ತಗ್ಗಿಸಿಕೊಳ್ಳುವರೋ ಅವರೇ ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವರಾಗಿರುವರು.</verse>
				<verse number="5">ಯಾರಾದರೂ ಇಂಥ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿಕೊಂಡರೆ ನನ್ನನ್ನೇ ಸ್ವೀಕರಿಸಿಕೊಳ್ಳುತ್ತಾರೆ.</verse>
				<verse number="6">“ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬರಿಗೆ ಯಾರಾದರೂ ಪಾಪಕ್ಕೆ ಕಾರಣರಾದರೆ, ಅಂಥವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದ ಆಳದಲ್ಲಿ ಮುಳುಗಿಸಿಡುವುದೇ ಲೇಸು, ಎಂದರು.</verse>
				<verse number="7">ಪಾಪಕ್ಕೆ ಕಾರಣವಾಗಿರುವ ಜಗತ್ತಿಗೆ ಕಷ್ಟ! ಇಂಥ ವಿಷಯಗಳು ಅನಿವಾರ್ಯ. ಆದರೆ ಪಾಪಕ್ಕೆ ಕಾರಣವಾಗಿರುವವರ ಗತಿಯನ್ನು ಏನೆಂದು ಹೇಳಲಿ!</verse>
				<verse number="8">ನಿಮ್ಮ ಕೈಯಾಗಲೀ ಕಾಲಾಗಲೀ ನಿಮ್ಮನ್ನು ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ಎರಡು ಕೈಯುಳ್ಳವರಾಗಿ ಇಲ್ಲವೆ ಎರಡು ಕಾಲುಳ್ಳವರಾಗಿ ನಿತ್ಯ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಕುಂಟರಾಗಿ ಇಲ್ಲವೆ ಊನರಾಗಿ ಜೀವದಲ್ಲಿ ಪ್ರವೇಶಿಸುವುದು ನಿಮಗೆ ಲೇಸು.</verse>
				<verse number="9">ನಿಮ್ಮ ಕಣ್ಣು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಬಿಡಿರಿ. ನೀವು ಎರಡು ಕಣ್ಣುಳ್ಳವರಾಗಿ ನರಕದ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದು ಕಣ್ಣುಳ್ಳವರಾಗಿ ಜೀವದಲ್ಲಿ ಪ್ರವೇಶಿಸುವುದು ನಿಮಗೆ ಲೇಸು.</verse>
				<verse number="10">“ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ಹೀನೈಸದಂತೆ ನೋಡಿಕೊಳ್ಳಿರಿ. ಪರಲೋಕದಲ್ಲಿರುವ ಅವರ ದೂತರು ಪರಲೋಕದ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿದ್ದಾರೆ.</verse>
				<verse number="11">ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು,” ಎಂದು ಹೇಳಿದರು.</verse>
				<verse number="12">“ಆಗ ನಿಮಗೆ ಏನು ಅನಿಸುತ್ತದೆ? ಒಬ್ಬ ಮನುಷ್ಯನಿಗೆ ನೂರು ಕುರಿಗಳಿರಲಾಗಿ, ಅವುಗಳಲ್ಲಿ ಒಂದು ತಪ್ಪಿಸಿಕೊಂಡುಹೋದರೆ, ಅವನು ತೊಂಬತ್ತೊಂಬತ್ತು ಕುರಿಗಳನ್ನು ಬಿಟ್ಟು ಬೆಟ್ಟಗಳಿಗೆ ಹೋಗಿ, ತಪ್ಪಿಸಿಕೊಂಡದ್ದನ್ನು ಹುಡುಕುವುದಿಲ್ಲವೇ?</verse>
				<verse number="13">ಅವನು ಅದನ್ನು ಕಂಡರೆ, ತಪ್ಪಿಸಿಕೊಳ್ಳದ ತೊಂಬತ್ತೊಂಬತ್ತು ಕುರಿಗಳಿಗಿಂತ ಈ ಒಂದು ಕುರಿಯ ವಿಷಯದಲ್ಲಿ ಹೆಚ್ಚು ಸಂತೋಷ ಪಡುತ್ತಾನೆಂದು ನಿಮಗೆ ನಿಜವಾಗಿ ಹೇಳುತ್ತೇನೆ.</verse>
				<verse number="14">ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬರಾದರೂ ನಾಶವಾಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.</verse>
				<verse number="15">“ನಿನ್ನ ಸಹೋದರ ಅಥವಾ ಸಹೋದರಿ ಪಾಪಮಾಡಿದರೆ, ನೀವಿಬ್ಬರೇ ಇರುವಾಗ ಹೋಗಿ ಅವರನ್ನು ಖಂಡಿಸು. ಅವರು ನಿನಗೆ ಕಿವಿಗೊಟ್ಟರೆ ನೀನು ನಿನ್ನ ಸಹೋದರ ಅಥವಾ ಸಹೋದರಿಯನ್ನು ಗೆದ್ದುಕೊಂಡಿರುವೆ.</verse>
				<verse number="16">ಆದರೆ ಅವರು ನಿನಗೆ ಕಿವಿಗೊಡದೆ ಹೋದರೆ, ನಿನ್ನೊಂದಿಗೆ ಇಬ್ಬರನ್ನು ಕರೆದುಕೊಂಡು ಹೋಗು. ಹೀಗೆ, ‘ಇಬ್ಬರ ಇಲ್ಲವೆ ಮೂವರ ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತು ಸ್ಥಾಪಿತವಾಗಲಿ.’</verse>
				<verse number="17">ಅವರು ಅವರಿಗೂ ಕಿವಿಗೊಡದೆ ಹೋದರೆ ಅದನ್ನು ಸಭೆಗೆ ತಿಳಿಸು. ಅವರು ಸಭೆಗೂ ಕಿವಿಗೊಡದೆ ಹೋದರೆ, ಅವನು ನಿನಗೆ ಅನ್ಯನಂತೆಯೂ ಸುಂಕದವನಂತೆಯೂ ಇರಲಿ.</verse>
				<verse number="18">“ನೀವು ಭೂಮಿಯಲ್ಲಿ ಯಾವುದನ್ನು ಬಂಧಿಸುತ್ತೀರೋ ಅದು ಪರಲೋಕದಲ್ಲಿಯೂ ಬಂಧಿತವಾಗುವುದು. ನೀವು ಭೂಮಿಯಲ್ಲಿ ಏನನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲಾಗುವುದು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.</verse>
				<verse number="19">“ಇನ್ನೂ ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದೇ ವಿಷಯಕ್ಕಾಗಿ ಭೂಮಿಯಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ, ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವುದು.</verse>
				<verse number="20">ಏಕೆಂದರೆ ಇಬ್ಬರಾಗಲಿ ಮೂವರಾಗಲಿ ನನ್ನ ಹೆಸರಿನಲ್ಲಿ ಎಲ್ಲಿ ಸೇರಿ ಬರುತ್ತಾರೋ ಅವರ ಮಧ್ಯದಲ್ಲಿ ನಾನು ಇದ್ದೇನೆ,” ಎಂದರು.</verse>
				<verse number="21">ತರುವಾಯ ಪೇತ್ರನು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ಸಹೋದರ ಅಥವಾ ಸಹೋದರಿ ನನಗೆ ವಿರೋಧವಾಗಿ ಪಾಪಮಾಡಿದರೆ ನಾನು ಎಷ್ಟು ಸಲ ಅವರನ್ನು ಕ್ಷಮಿಸಬೇಕು? ಏಳು ಸಲವೋ?” ಎಂದು ಕೇಳಿದನು.</verse>
				<verse number="22">ಅದಕ್ಕೆ ಯೇಸು, “ಏಳು ಸಲವಲ್ಲ, ಏಳೆಪ್ಪತ್ತು ಸಲ ಎಂದು ನಾನು ನಿಮಗೆ ಹೇಳುತ್ತೇನೆ.</verse>
				<verse number="23">“ಆದ್ದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕ ತೆಗೆದುಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.</verse>
				<verse number="24">ಅವನು ಲೆಕ್ಕ ತೆಗೆದುಕೊಳ್ಳಲು ಪ್ರಾರಂಭಿಸಿದಾಗ, ಹತ್ತು ಕೋಟಿ ಚಿನ್ನದ ನಾಣ್ಯಗಳ ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು.</verse>
				<verse number="25">ಆದರೆ ಕೊಡುವುದಕ್ಕೆ ಅವನಲ್ಲಿ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅರಸನು ಅಪ್ಪಣೆಕೊಟ್ಟನು.</verse>
				<verse number="26">“ಆಗ ಆ ಸೇವಕನು ಮೊಣಕಾಲೂರಿ, ‘ನನ್ನನ್ನು ಸ್ವಲ್ಪ ಸಹಿಸಿಕೊಳ್ಳಿರಿ. ನಾನು ನಿನ್ನ ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಹೇಳಿದನು.</verse>
				<verse number="27">ಆಗ ಅರಸನು ಸೇವಕನ ಮೇಲೆ ಕನಿಕರಪಟ್ಟು, ಅವನನ್ನು ಬಿಡುಗಡೆ ಮಾಡಿ ಅವನ ಸಾಲವನ್ನೆಲ್ಲಾ ಮನ್ನಿಸಿಬಿಟ್ಟನು.</verse>
				<verse number="28">“ಆದರೆ ಅದೇ ಸೇವಕನು ಹೊರಗೆ ಹೋಗಿ, ತನಗೆ ಸುಮಾರು ನೂರು ಬೆಳ್ಳಿ ನಾಣ್ಯಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆಯ ಸೇವಕರಲ್ಲಿ ಒಬ್ಬನನ್ನು ಕಂಡು, ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲವನ್ನು ತೀರಿಸು,’ ಎಂದನು.</verse>
				<verse number="29">“ಆಗ ಅವನ ಜೊತೆಯ ಸೇವಕನು ಮೊಣಕಾಲೂರಿ ಅವನಿಗೆ, ‘ನನ್ನನ್ನು ಸ್ವಲ್ಪ ಸಹಿಸಿಕೊಳ್ಳಿರಿ. ನಾನು ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಅವನನ್ನು ಬೇಡಿಕೊಂಡನು.</verse>
				<verse number="30">“ಆದರೆ ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ, ತನ್ನ ಸಾಲವನ್ನು ತೀರಿಸುವವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು.</verse>
				<verse number="31">ಅವನ ಜೊತೆಯ ಸೇವಕರು ನಡೆದದ್ದನ್ನು ನೋಡಿ, ಬಹಳ ವ್ಯಥೆಪಟ್ಟು ಹೋಗಿ ತಮ್ಮ ಅರಸನಿಗೆ ನಡೆದದ್ದೆಲ್ಲವನ್ನು ವರದಿಮಾಡಿದರು.</verse>
				<verse number="32">“ಆಗ ಅರಸನು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ, ‘ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡಿದ್ದರಿಂದ ನಾನು ನಿನ್ನ ಸಾಲವನ್ನೆಲ್ಲಾ ಮನ್ನಿಸಿದೆನು.</verse>
				<verse number="33">ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೆ ಸೇವಕನ ಮೇಲೆ ಕರುಣೆ ತೋರಿಸಬೇಕಿತ್ತಲ್ಲವೇ?’ ಎಂದು ಹೇಳಿ,</verse>
				<verse number="34">ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅರಸನು ಅವನನ್ನು ಕಠಿಣ ಶಿಕ್ಷೆಗೆ ಒಳಪಡಿಸಲು ಸೆರೆಮನೆಯ ಅಧಿಕಾರಿಯ ವಶಕ್ಕೆ ಒಪ್ಪಿಸಿದನು.</verse>
				<verse number="35">“ಅದರಂತೆಯೇ ನಿಮ್ಮಲ್ಲಿ ಪ್ರತಿಯೊಬ್ಬರು ಹೃದಯಪೂರ್ವಕವಾಗಿ ತನ್ನ ಸಹೋದರನನ್ನು ಕ್ಷಮಿಸದೆ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ಸಹ ನಿಮಗೆ ಹಾಗೆಯೇ ಮಾಡುವರು,” ಎಂದರು.</verse>
			</chapter>
			<chapter number="19">
				<verse number="1">ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ, ಗಲಿಲಾಯದಿಂದ ಹೊರಟು ಯೊರ್ದನ್ ನದಿಯ ಆಚೆಯ ಯೂದಾಯ ಪ್ರಾಂತಕ್ಕೆ ಬಂದರು.</verse>
				<verse number="2">ಜನರ ದೊಡ್ಡ ಸಮೂಹಗಳು ಅವರನ್ನು ಹಿಂಬಾಲಿಸಿದವು, ಯೇಸು ಅವರನ್ನು ಅಲ್ಲಿ ಸ್ವಸ್ಥಮಾಡಿದರು.</verse>
				<verse number="3">ಫರಿಸಾಯರಲ್ಲಿ ಕೆಲವರು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಅವರ ಬಳಿಗೆ ಬಂದು, “ಒಬ್ಬ ಪುರುಷನು ಯಾವ ಕಾರಣದಿಂದಾದರೂ ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೋ?” ಎಂದು ಕೇಳಿದರು.</verse>
				<verse number="4">ಯೇಸು ಉತ್ತರವಾಗಿ ಅವರಿಗೆ, “ಆದಿಯಿಂದಲೇ ಸೃಷ್ಟಿಕರ್ತ, ‘ಅವರನ್ನು ಗಂಡು ಹೆಣ್ಣಾಗಿ ಮಾಡಿದರು.</verse>
				<verse number="5">ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು,’ ಎಂದು ಹೇಳಿದ್ದನ್ನು ನೀವು ಓದಲಿಲ್ಲವೇ?</verse>
				<verse number="6">ಆದ್ದರಿಂದ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ. ಆದಕಾರಣ ದೇವರು ಕೂಡಿಸಿದ್ದನ್ನು, ಮನುಷ್ಯನು ಅಗಲಿಸಬಾರದು,” ಎಂದು ಹೇಳಿದರು.</verse>
				<verse number="7">ಅದಕ್ಕೆ ಅವರು ಯೇಸುವಿಗೆ, “ಹಾಗಾದರೆ ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಆಕೆಯನ್ನು ಬಿಟ್ಟು ಬಿಡಬಹುದೆಂದು ಮೋಶೆಯು ಏಕೆ ಅಪ್ಪಣೆಕೊಟ್ಟನು?” ಎಂದು ಕೇಳಿದರು.</verse>
				<verse number="8">ಯೇಸು ಉತ್ತರವಾಗಿ ಅವರಿಗೆ, “ಮೋಶೆಯು ನಿಮ್ಮ ಹೃದಯ ಕಾಠಿಣ್ಯದ ದೆಸೆಯಿಂದ ಹೆಂಡತಿಯನ್ನು ಬಿಟ್ಟುಬಿಡುವುದಕ್ಕೆ ನಿಮಗೆ ಅನುಮತಿ ಕೊಟ್ಟನು. ಆದರೆ ಆದಿಯಿಂದ ಅದು ಹಾಗೆ ಇರಲಿಲ್ಲ.</verse>
				<verse number="9">ನಾನು ನಿಮಗೆ ಹೇಳುವುದೇನೆಂದರೆ, ಹಾದರದ ಕಾರಣದಿಂದಲ್ಲದೆ, ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟು, ಮತ್ತೊಬ್ಬಳನ್ನು ಮದುವೆಯಾಗುವವನು ವ್ಯಭಿಚಾರ ಮಾಡುವವನಾಗಿದ್ದಾನೆ,” ಎಂದರು.</verse>
				<verse number="10">ಆಗ ಶಿಷ್ಯರು ಯೇಸುವಿಗೆ, “ಸತಿಪತಿಯರ ಸಂಬಂಧ ಹೀಗಿರುವುದಾದರೆ, ಮದುವೆ ಆಗದಿರುವುದೇ ಒಳ್ಳೆಯದು,” ಎಂದರು.</verse>
				<verse number="11">ಆದರೆ ಯೇಸು ಅವರಿಗೆ, “ಯಾರಿಗೆ ಇದು ಅನುಮತಿಸಲಾಗಿದೆಯೋ ಅವರೇ ಹೊರತು ಎಲ್ಲರೂ ಈ ಮಾತನ್ನು ಸ್ವೀಕರಿಸಲಾರರು.</verse>
				<verse number="12">ತಮ್ಮ ತಾಯಿಯ ಗರ್ಭದಿಂದ ಹುಟ್ಟಿದಾಗಲೇ ಕೆಲವರು ನಪುಂಸಕರಾದವರಿದ್ದಾರೆ, ಕೆಲವರು ಮನುಷ್ಯರಿಂದ ಮಾಡಲಾದ ನಪುಂಸಕರು ಇದ್ದಾರೆ. ಇನ್ನು ಕೆಲವರು ಪರಲೋಕ ರಾಜ್ಯದ ನಿಮಿತ್ತವಾಗಿ ತಮ್ಮನ್ನು ತಾವೇ ನಪುಂಸಕರಾಗಿ ಮಾಡಿಕೊಂಡವರೂ ಇದ್ದಾರೆ. ಇದನ್ನು ಸ್ವೀಕರಿಸಬಲ್ಲವನು ಸ್ವೀಕರಿಸಲಿ,” ಎಂದರು.</verse>
				<verse number="13">ಯೇಸು ತಮ್ಮ ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೆಲವು ಜನರು ಚಿಕ್ಕಮಕ್ಕಳನ್ನು ಯೇಸುವಿನ ಬಳಿಗೆ ತಂದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.</verse>
				<verse number="14">ಆದರೆ ಯೇಸು, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ಪರಲೋಕ ರಾಜ್ಯವು ಇಂಥವರದೇ,” ಎಂದರು.</verse>
				<verse number="15">ತರುವಾಯ ಯೇಸು ಮಕ್ಕಳ ಮೇಲೆ ತಮ್ಮ ಕೈಯಿಟ್ಟು ಆಶೀರ್ವದಿಸಿ ಅಲ್ಲಿಂದ ಹೊರಟು ಹೋದರು.</verse>
				<verse number="16">ಆಗ ಒಬ್ಬನು ಬಂದು ಯೇಸುವಿಗೆ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆಯ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.</verse>
				<verse number="17">“ನೀನು ಒಳ್ಳೆಯದನ್ನು ಕುರಿತು ನನ್ನನ್ನು ಕೇಳುವುದೇಕೆ? ಒಬ್ಬಾತನೇ ಒಳ್ಳೆಯವನು. ಆದರೆ ನೀನು ಜೀವದಲ್ಲಿ ಪ್ರವೇಶಿಸಬೇಕಾದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆದುಕೋ,” ಎಂದು ಯೇಸು ಉತ್ತರಕೊಟ್ಟರು.</verse>
				<verse number="18">ಅವನು ಯೇಸುವಿಗೆ, “ಅವು ಯಾವುವು?” ಎಂದು ಕೇಳಿದನು. ಅದಕ್ಕೆ ಯೇಸು, “ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು,</verse>
				<verse number="19">ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು. ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು,” ಎಂದು ಹೇಳಿದರು.</verse>
				<verse number="20">ಆ ಯೌವನಸ್ಥನು ಯೇಸುವಿಗೆ, “ಇವೆಲ್ಲವನ್ನೂ ನಾನು ಕೈಗೊಂಡಿದ್ದೇನೆ, ಇನ್ನು ನನಗೇನು ಕಡಿಮೆಯಾಗಿದೆ?” ಎಂದು ಕೇಳಿದನು.</verse>
				<verse number="21">ಯೇಸು ಅವನಿಗೆ, “ನೀನು ಸಂಪೂರ್ಣನಾಗಲು ಅಪೇಕ್ಷಿಸಿದರೆ, ಹೋಗಿ ನಿನ್ನ ಆಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು; ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದು ಹೇಳಿದರು.</verse>
				<verse number="22">ಆದರೆ ಆ ಯುವಕನು ಯೇಸು ಹೇಳಿದ್ದನ್ನು ಕೇಳಿ, ದುಃಖದಿಂದ ಹೊರಟುಹೋದನು. ಏಕೆಂದರೆ ಅವನಿಗೆ ಬಹಳ ಆಸ್ತಿ ಇತ್ತು.</verse>
				<verse number="23">ಆಗ ಯೇಸು ತಮ್ಮ ಶಿಷ್ಯರಿಗೆ, “ಐಶ್ವರ್ಯವಂತನು ಪರಲೋಕ ರಾಜ್ಯದಲ್ಲಿ ಸೇರುವುದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.</verse>
				<verse number="24">ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ ಎಂದು ಪುನಃ ನಿಮಗೆ ಹೇಳುತ್ತೇನೆ,” ಎಂದರು.</verse>
				<verse number="25">ಇದನ್ನು ಕೇಳಿದಾಗ ಯೇಸುವಿನ ಶಿಷ್ಯರು ಅತ್ಯಂತ ವಿಸ್ಮಯಗೊಂಡು, “ಹಾಗಾದರೆ ಯಾರು ರಕ್ಷಣೆಹೊಂದುವರು?” ಎಂದು ಕೇಳಿದರು.</verse>
				<verse number="26">ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ, “ಮನುಷ್ಯರಿಗೆ ಇದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು.</verse>
				<verse number="27">ಪೇತ್ರನು ಯೇಸುವಿಗೆ, “ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ! ನಮಗೆ ಏನು ದೊರೆಯುವುದು?” ಎಂದು ಕೇಳಿದನು.</verse>
				<verse number="28">ಯೇಸು ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಸಮಸ್ತವೂ ನವೀಕರಣವಾಗುವಾಗ, ಮನುಷ್ಯಪುತ್ರನಾದ ನಾನು ನನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಂಡಿರಲು, ನನ್ನನ್ನು ಹಿಂಬಾಲಿಸಿದವರಾದ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯತೀರಿಸುವಿರಿ.</verse>
				<verse number="29">ತನ್ನ ಮನೆಗಳನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಹೊಲವನ್ನಾಗಲಿ, ನನ್ನ ಹೆಸರಿನ ನಿಮಿತ್ತವಾಗಿ ಬಿಟ್ಟುಬಿಡುವ ಪ್ರತಿಯೊಬ್ಬನು ನೂರರಷ್ಟು ಪಡೆದುಕೊಳ್ಳುವನು ಮತ್ತು ನಿತ್ಯಜೀವಕ್ಕೆ ಬಾಧ್ಯನಾಗುವನು.</verse>
				<verse number="30">ಆದರೆ ಮೊದಲನೆಯವರಾದ ಅನೇಕರು ಕಡೆಯವರಾಗುವರು, ಕಡೆಯವರಾದವರು ಮೊದಲನೆಯವರಾಗುವರು.</verse>
			</chapter>
			<chapter number="20">
				<verse number="1">“ಪರಲೋಕ ರಾಜ್ಯವನ್ನು ತನ್ನ ದ್ರಾಕ್ಷಿಯ ತೋಟಕ್ಕೆ ಕೂಲಿಯಾಳುಗಳನ್ನು ಕರೆಯುವುದಕ್ಕಾಗಿ ಬೆಳಿಗ್ಗೆ ಹೊರಟ ಒಬ್ಬ ಯಜಮಾನನಿಗೆ ಹೋಲಿಸಲಾಗಿದೆ.</verse>
				<verse number="2">ಅವನು ದಿನಕ್ಕೆ ಒಂದು ಬೆಳ್ಳಿನಾಣ್ಯ ಕೂಲಿಯಾಳುಗಳೊಂದಿಗೆ ಒಪ್ಪಂದ ಮಾಡಿಕೊಂಡು ತನ್ನ ದ್ರಾಕ್ಷಿಯ ತೋಟಕ್ಕೆ ಅವರನ್ನು ಕಳುಹಿಸಿಕೊಟ್ಟನು.</verse>
				<verse number="3">“ಅವನು ಸುಮಾರು ಒಂಬತ್ತು ಗಂಟೆಗೆ ಹೊರಗೆ ಹೋಗಿ ಇನ್ನು ಕೆಲವರು ಸಂತೆಯ ಸ್ಥಳದಲ್ಲಿ ಕೆಲಸವಿಲ್ಲದೆ ನಿಂತಿರುವುದನ್ನು ಕಂಡು,</verse>
				<verse number="4">ಅವರಿಗೆ, ‘ನೀವು ಸಹ ದ್ರಾಕ್ಷಿಯ ತೋಟಕ್ಕೆ ಹೋಗಿರಿ; ಸರಿಯಾದ ಕೂಲಿಯನ್ನು ನಾನು ನಿಮಗೆ ಕೊಡುತ್ತೇನೆ,’ ಎಂದು ಹೇಳಿದನು.</verse>
				<verse number="5">ಆಗ ಅವರು ಹೊರಟು ಹೋದರು. “ಅವನು ಸುಮಾರು ಹನ್ನೆರಡು ಗಂಟೆಗೂ ಅನಂತರ ಮೂರು ಗಂಟೆಗೂ ತಿರುಗಿ ಹೋಗಿ ಹಾಗೆಯೇ ಮಾಡಿದನು.</verse>
				<verse number="6">ತರುವಾಯ ಸುಮಾರು ಐದು ಗಂಟೆಗೆ ಅವನು ಹೊರಗೆ ಹೋಗಿ ಬೇರೆ ಕೆಲವರು ಕೆಲಸವಿಲ್ಲದೆ ನಿಂತಿರುವುದನ್ನು ಕಂಡು, ‘ನೀವು ದಿನವೆಲ್ಲಾ ಇಲ್ಲಿ ಕೆಲಸವಿಲ್ಲದೆ ನಿಂತಿರುವುದೇಕೆ?’ ಎಂದು ಕೇಳಿದನು.</verse>
				<verse number="7">“ಅವರು, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ,’ ಎಂದರು. “ಆಗ ಅವನು, ‘ನೀವು ಸಹ ದ್ರಾಕ್ಷಿಯ ತೋಟಕ್ಕೆ ಹೋಗಿರಿ,’ ಎಂದು ಹೇಳಿದನು.</verse>
				<verse number="8">“ಸಂಜೆಯಾದಾಗ, ದ್ರಾಕ್ಷಿಯ ತೋಟದ ಯಜಮಾನನು ತನ್ನ ಮೇಸ್ತ್ರಿಗೆ, ‘ಕೂಲಿಯಾಳುಗಳನ್ನು ಕರೆದು, ಕೊನೆಯವನಿಂದ ಪ್ರಾರಂಭಿಸಿ ಮೊದಲನೆಯವನವರೆಗೆ ಕೂಲಿಯನ್ನು ಕೊಡು,’ ಎಂದು ಹೇಳಿದನು.</verse>
				<verse number="9">“ಆಗ ಐದು ಗಂಟೆಗೆ ಕರೆದವರು ಬಂದಾಗ ಪ್ರತಿಯೊಬ್ಬನಿಗೂ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.</verse>
				<verse number="10">ಆಗ ಮೊದಲು ಬಂದವರು, ತಮಗೆ ಹೆಚ್ಚು ದೊರೆಯುವುದೆಂದು ನೆನಸಿದರು. ಆದರೆ ಅವರಲ್ಲಿ ಪ್ರತಿಯೊಬ್ಬನಿಗೂ ಅದೇ ರೀತಿಯಲ್ಲಿ ಒಂದೊಂದೇ ಬೆಳ್ಳಿನಾಣ್ಯ ಸಿಕ್ಕಿತು.</verse>
				<verse number="11">ಅವರು ಅದನ್ನು ತೆಗೆದುಕೊಂಡಾಗ, ಯಜಮಾನನ ವಿರೋಧವಾಗಿ ಗೊಣುಗುಟ್ಟುತ್ತಾ,</verse>
				<verse number="12">‘ಕಡೆಯವರಾದ ಇವರು ಒಂದೇ ತಾಸು ಕೆಲಸಮಾಡಿದ್ದಾರೆ, ಆದರೆ ದಿನವೆಲ್ಲಾ ಬಿಸಿಲಿನಲ್ಲಿ ಭಾರ ಹೊತ್ತು ಕೆಲಸಮಾಡಿದ ನಮ್ಮನ್ನು ನೀನು ಇವರಿಗೆ ಸಮಮಾಡಿದ್ದಿ,’ ಎಂದರು.</verse>
				<verse number="13">“ಆದರೆ ಯಜಮಾನನು ಅವರಲ್ಲಿ ಒಬ್ಬನಿಗೆ ಉತ್ತರವಾಗಿ, ‘ಸ್ನೇಹಿತನೇ, ನಾನು ನಿನಗೆ ಅನ್ಯಾಯ ಮಾಡಲಿಲ್ಲ. ಒಂದು ಬೆಳ್ಳಿ ನಾಣ್ಯಕ್ಕೆ ನೀನು ನನ್ನೊಂದಿಗೆ ಒಪ್ಪಂದ ಮಾಡಿಕೊಳ್ಳಲಿಲ್ಲವೇ?</verse>
				<verse number="14">ನಿನ್ನ ಕೂಲಿ ತೆಗೆದುಕೊಂಡು ಹೋಗು. ನಿನಗೆ ನಾನು ಕೊಟ್ಟಂತೆಯೇ ಈ ಕಡೆಯವನಿಗೂ ಕೊಡುವುದು ನನ್ನ ಇಷ್ಟ.</verse>
				<verse number="15">ನನ್ನದನ್ನು ನನ್ನ ಇಷ್ಟಬಂದಂತೆ ಕೊಡುವುದಕ್ಕೆ ನನಗೆ ಹಕ್ಕಿಲ್ಲವೇ? ನಾನು ಔದಾರ್ಯವುಳ್ಳವನಾದ್ದರಿಂದ, ನಿನಗೆ ಹೊಟ್ಟೆಯುರಿಯೋ?’ ಎಂದನು.</verse>
				<verse number="16">“ಹೀಗೆ ಕಡೆಯವರು ಮೊದಲನೆಯವರಾಗುವರು, ಮೊದಲನೆಯವರು ಕಡೆಯವರಾಗುವರು,” ಎಂದು ಹೇಳಿದರು.</verse>
				<verse number="17">ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ ಹನ್ನೆರಡು ಮಂದಿ ಶಿಷ್ಯರನ್ನು ದಾರಿಯಲ್ಲಿ ಪ್ರತ್ಯೇಕವಾಗಿ ಕರೆದು ಅವರಿಗೆ,</verse>
				<verse number="18">“ಇಗೋ, ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ಮನುಷ್ಯಪುತ್ರನಾದ ನನ್ನನ್ನು ಮುಖ್ಯಯಾಜಕರ ಮತ್ತು ನಿಯಮ ಬೋಧಕರ ಕೈಗೆ ಒಪ್ಪಿಸಿಕೊಡುವರು. ಅವರು ನನಗೆ ಮರಣದಂಡನೆಯನ್ನು ವಿಧಿಸುವರು.</verse>
				<verse number="19">ಇದಲ್ಲದೆ ನನ್ನನ್ನು ಹಾಸ್ಯಮಾಡುವುದಕ್ಕೂ ಕೊರಡೆಗಳಿಂದ ಹೊಡೆಯುವುದಕ್ಕೂ ಶಿಲುಬೆಗೆ ಹಾಕುವುದಕ್ಕೂ ಯೆಹೂದ್ಯರಲ್ಲದವರ ಕೈಗೆ ಒಪ್ಪಿಸಿಕೊಡುವರು. ನಾನಾದರೋ ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವೆನು,” ಎಂದು ಹೇಳಿದರು.</verse>
				<verse number="20">ಜೆಬೆದಾಯನ ಮಕ್ಕಳ ತಾಯಿ ತನ್ನ ಪುತ್ರರ ಸಮೇತ ಯೇಸುವಿನ ಬಳಿಗೆ ಬಂದು, ಅವರ ಮುಂದೆ ಮೊಣಕಾಲೂರಿ ಬೇಡಿಕೊಂಡಳು.</verse>
				<verse number="21">ಯೇಸು, “ನಿನ್ನ ಬೇಡಿಕೆ ಏನು?” ಎಂದು ಕೇಳಿದರು. “ನಿಮ್ಮ ರಾಜ್ಯದಲ್ಲಿ ಈ ನನ್ನ ಇಬ್ಬರು ಪುತ್ರರಲ್ಲಿ ಒಬ್ಬನು ನಿಮ್ಮ ಬಲಗಡೆಯಲ್ಲೂ ಇನ್ನೊಬ್ಬನು ನಿಮ್ಮ ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ಅನುಗ್ರಹಿಸಬೇಕು,” ಎಂದು ಬೇಡಿಕೊಂಡಳು.</verse>
				<verse number="22">ಯೇಸು ಉತ್ತರವಾಗಿ, “ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಲಿರುವ ಪಾತ್ರೆಯಿಂದ ಕುಡಿಯಲು ನಿಮ್ಮಿಂದಾದೀತೇ?” ಎಂದು ಕೇಳಿದರು. ಅವರು, “ಹೌದು, ನಮ್ಮಿಂದಾಗುವುದು,” ಎಂದು ಹೇಳಿದರು.</verse>
				<verse number="23">ಅದಕ್ಕೆ ಯೇಸು, “ನನ್ನ ಪಾತ್ರೆಯಿಂದ ನೀವು ಕುಡಿಯುವಿರಿ, ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವಂತೆ ಅನುಗ್ರಹಿಸುವುದು ನನ್ನದಲ್ಲ, ನನ್ನ ತಂದೆಯಿಂದ ಅದು ಯಾರಿಗೋಸ್ಕರ ಸಿದ್ಧವಾಗಿದೆಯೋ ಅವರಿಗೇ ಕೊಡಲಾಗುವುದು,” ಎಂದು ಹೇಳಿದರು.</verse>
				<verse number="24">ಬೇರೆ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ, ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.</verse>
				<verse number="25">ಆದರೆ ಯೇಸು ಶಿಷ್ಯರನ್ನು ತಮ್ಮ ಹತ್ತಿರಕ್ಕೆ ಕರೆದು, “ಯೆಹೂದ್ಯರಲ್ಲದವರ ಅಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದೊರೆತನ ಮಾಡುತ್ತಾರೆಂದೂ ಉನ್ನತ ಅಧಿಕಾರಿಗಳು ಅವರ ಮೇಲೆ ಅಧಿಕಾರವನ್ನು ನಡೆಸುತ್ತಾರೆಂದೂ ನಿಮಗೆ ತಿಳಿದಿದೆ.</verse>
				<verse number="26">ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿರಲಿ.</verse>
				<verse number="27">ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆಂದಿದ್ದರೆ, ಅವನು ನಿಮ್ಮ ಆಳಾಗಿರಲಿ.</verse>
				<verse number="28">ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನೇ ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು.</verse>
				<verse number="29">ಯೇಸು ಮತ್ತು ಅವರ ಶಿಷ್ಯರು ಯೆರಿಕೋವಿನಿಂದ ಹೊರಟು ಹೋಗುತ್ತಿರುವಾಗ, ಜನರು ದೊಡ್ಡ ಸಮೂಹವಾಗಿ ಯೇಸುವನ್ನು ಹಿಂಬಾಲಿಸಿದರು.</verse>
				<verse number="30">ದಾರಿಯ ಮಗ್ಗುಲಲ್ಲಿ ಕೂತಿದ್ದ ಇಬ್ಬರು ಕುರುಡರು ಯೇಸು ಹಾದು ಹೋಗುತ್ತಿದ್ದಾರೆಂದು ಕೇಳಿ, “ಕರ್ತನೇ, ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು!” ಎಂದು ಕೂಗಿ ಹೇಳಿದರು.</verse>
				<verse number="31">ಅವರು ಸುಮ್ಮನಿರುವಂತೆ ಜನರ ಸಮೂಹವು ಅವರನ್ನು ಗದರಿಸಿತು. ಆದರೂ ಅವರು, “ಕರ್ತನೇ, ದಾವೀದನ ಪುತ್ರನೇ, ನಮ್ಮ ಮೇಲೆ ಕರುಣೆಯಿಡು!” ಎಂದು ಇನ್ನೂ ಗಟ್ಟಿಯಾಗಿ ಕೂಗಿಕೊಂಡರು.</verse>
				<verse number="32">ಆಗ ಯೇಸು ನಿಂತು, ಅವರನ್ನು ಕರೆದು, “ನಾನು ನಿಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೀರಿ?” ಎಂದು ಕೇಳಿದರು.</verse>
				<verse number="33">ಅವರು ಯೇಸುವಿಗೆ, “ಕರ್ತದೇವರೇ, ನಮಗೆ ಕಣ್ಣು ಕಾಣುವಂತೆ ಮಾಡು,” ಎಂದರು.</verse>
				<verse number="34">ಯೇಸು ಅವರ ಮೇಲೆ ಕನಿಕರಪಟ್ಟು ಅವರ ಕಣ್ಣುಗಳನ್ನು ಮುಟ್ಟಿದರು. ಕೂಡಲೇ ಅವರ ಕಣ್ಣುಗಳು ದೃಷ್ಟಿಯನ್ನು ಪಡೆದವು. ಅವರೂ ಯೇಸುವನ್ನು ಹಿಂಬಾಲಿಸಿದರು.</verse>
			</chapter>
			<chapter number="21">
				<verse number="1">ಅವರು ಯೆರೂಸಲೇಮಿಗೆ ಸಮೀಪಿಸಿ ಓಲಿವ್ ಗುಡ್ಡದ ಬೇತ್ಫಗೆ ಬಂದಾಗ, ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ,</verse>
				<verse number="2">ಅವರಿಗೆ, “ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ. ತಕ್ಷಣವೇ ಒಂದು ಕತ್ತೆಯು ತನ್ನ ಮರಿಯೊಂದಿಗೆ ಕಟ್ಟಿರುವುದನ್ನು ನೀವು ಕಾಣುವಿರಿ. ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ.</verse>
				<verse number="3">ಯಾವನಾದರೂ ನಿಮಗೆ ಏನಾದರೂ ಕೇಳಿದರೆ, ನೀವು ಅವನಿಗೆ, ‘ಇವು ಕರ್ತದೇವರಿಗೆ ಅವಶ್ಯವಾಗಿವೆ’ ಎಂದು ಹೇಳಿರಿ. ಆಗ ಅವನು ಅವುಗಳನ್ನು ಕೂಡಲೇ ಕಳುಹಿಸುವನು,” ಎಂದು ಹೇಳಿದರು.</verse>
				<verse number="4">ಇದೆಲ್ಲವೂ ಪವಿತ್ರ ವೇದದಲ್ಲಿ ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಆಯಿತು. ಅದೇನೆಂದರೆ,</verse>
				<verse number="5">“ಚೀಯೋನಿನ ಪುತ್ರಿಗೆ ಹೇಳಿರಿ, ‘ಇಗೋ, ನಿನ್ನ ಅರಸನು, ಸಾತ್ವಿಕನಾಗಿ, ಕತ್ತೆಯನ್ನೂ, ಕತ್ತೆಯಮರಿಯನ್ನೂ ಹತ್ತಿದವನಾಗಿ ನಿನ್ನ ಬಳಿಗೆ ಬರುತ್ತಾನೆ.’ ”</verse>
				<verse number="6">ಆಗ ಶಿಷ್ಯರು ಹೊರಟುಹೋಗಿ ಯೇಸು ತಮಗೆ ಅಪ್ಪಣೆ ಕೊಟ್ಟಂತೆಯೇ ಮಾಡಿದರು.</verse>
				<verse number="7">ಅವರು ಕತ್ತೆಯನ್ನೂ ಅದರ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಕಿದರು; ಯೇಸು ಅದರ ಮೇಲೆ ಕೂತುಕೊಂಡರು.</verse>
				<verse number="8">ಆಗ ಜನರ ದೊಡ್ಡ ಸಮೂಹವು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. ಇತರರು ಮರಗಳಿಂದ ಕೊಂಬೆಗಳನ್ನು ಕೊಯ್ದು ದಾರಿಯಲ್ಲಿ ಹರಡಿದರು.</verse>
				<verse number="9">ಯೇಸುವಿನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು, “ದಾವೀದನ ಪುತ್ರನಿಗೆ ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!” “ಮಹೋನ್ನತದಲ್ಲಿ ಜಯ!” ಎಂದು ಘೋಷಿಸಿದರು.</verse>
				<verse number="10">ಯೆರೂಸಲೇಮಿಗೆ ಪ್ರವೇಶಿಸಿದಾಗ, ಪಟ್ಟಣದಲ್ಲಿ ಕೋಲಾಹಲವುಂಟಾಗಿ, “ಇವರು ಯಾರು?” ಎಂದು ಕೇಳಿದರು.</verse>
				<verse number="11">ಅದಕ್ಕೆ ಜನಸಮೂಹವು, “ಇವರು ಯೇಸು, ಗಲಿಲಾಯದ ನಜರೇತಿನ ಪ್ರವಾದಿ,” ಎಂದು ಹೇಳಿತು.</verse>
				<verse number="12">ಯೇಸು ದೇವಾಲಯದ ಅಂಗಳದೊಳಗೆ ಹೋಗಿ ಮಾರುತ್ತಿದ್ದವರನ್ನೂ ಕೊಂಡುಕೊಳ್ಳುತ್ತಿದ್ದವರನ್ನೂ ಹೊರಗಟ್ಟಿದರು. ಹಣ ವಿನಿಮಯ ಮಾಡುತ್ತಿದ್ದವರ ಮೇಜುಗಳನ್ನೂ ಪಾರಿವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿದರು.</verse>
				<verse number="13">ಯೇಸು ಅವರಿಗೆ, “ ‘ನನ್ನ ಮನೆಯು ಪ್ರಾರ್ಥನೆಯ ಮನೆಯಾಗಿದೆ,’ ಎಂದು ಬರೆದದೆ. ಆದರೆ ನೀವಾದರೋ ಅದನ್ನು, ‘ಕಳ್ಳರ ಗವಿಯನ್ನಾಗಿ’ ಮಾಡಿದ್ದೀರಿ,” ಎಂದು ಹೇಳಿದರು.</verse>
				<verse number="14">ಆಗ ಕುರುಡರು ಮತ್ತು ಕುಂಟರು ದೇವಾಲಯದಲ್ಲಿ ಅವರ ಬಳಿಗೆ ಬಂದರು. ಯೇಸು ಅವರನ್ನು ಸ್ವಸ್ಥಮಾಡಿದರು.</verse>
				<verse number="15">ಯೇಸು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಮಕ್ಕಳು ದೇವಾಲಯದಲ್ಲಿ, “ದಾವೀದನ ಪುತ್ರನಿಗೆ ಹೊಸನ್ನ,” ಎಂದು ಕೂಗುವುದನ್ನು ಮುಖ್ಯಯಾಜಕರೂ ನಿಯಮ ಬೋಧಕರೂ ಕಂಡು ಕೋಪಗೊಂಡರು.</verse>
				<verse number="16">“ಮಕ್ಕಳು ಹೇಳುವುದೇನೆಂದು ನಿನಗೆ ಕೇಳಿಸುತ್ತಿದೆಯೋ?” ಎಂದು ಯೇಸುವನ್ನು ಕೇಳಿದರು. ಯೇಸು, “ಹೌದು,” ಎಂದು ಉತ್ತರಿಸಿ ಅವರಿಗೆ, “ ‘ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಬಾಯಿಂದ ನೀನು ಸ್ತೋತ್ರವನ್ನು ಸಿದ್ಧಿಗೆ ತಂದಿದ್ದೀ,’ ಎಂಬುದನ್ನು ಓದಲಿಲ್ಲವೋ?” ಎಂದರು.</verse>
				<verse number="17">ಯೇಸು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ, ಅಲ್ಲಿ ರಾತ್ರಿ ಉಳಿದುಕೊಂಡರು.</verse>
				<verse number="18">ಬೆಳಿಗ್ಗೆ ಪಟ್ಟಣಕ್ಕೆ ಹಿಂದಿರುಗಿ ಬರುತ್ತಿದ್ದಾಗ, ಯೇಸುವಿಗೆ ಹಸಿವಾಯಿತು.</verse>
				<verse number="19">ಯೇಸು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು, ಅದರ ಹತ್ತಿರಕ್ಕೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ. ಆಗ ಯೇಸು, ಆ ಮರಕ್ಕೆ, “ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ,” ಎಂದರು. ತಕ್ಷಣವೇ ಅಂಜೂರದ ಮರವು ಒಣಗಿ ಹೋಯಿತು.</verse>
				<verse number="20">ಶಿಷ್ಯರು ಅದನ್ನು ಕಂಡು ಆಶ್ಚರ್ಯದಿಂದ, “ಇಷ್ಟು ಬೇಗನೆ ಈ ಅಂಜೂರದ ಮರವು ಒಣಗಿಹೋಯಿತಲ್ಲಾ?” ಎಂದು ಕೇಳಿದರು.</verse>
				<verse number="21">ಯೇಸು ಉತ್ತರವಾಗಿ ಅವರಿಗೆ, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ಸಂದೇಹ ಪಡದೆ ನಂಬಿದರೆ, ನಾನು ಈ ಅಂಜೂರದ ಮರಕ್ಕೆ ಮಾಡಿದಂತೆಯೇ ನೀವೂ ಮಾಡುವಿರಿ. ಇದಲ್ಲದೆ ನೀವು ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೂ ಅದು ಹಾಗೆಯೇ ಆಗುವುದು.</verse>
				<verse number="22">ನೀವು ನಂಬಿಕೆಯಿಂದ ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅವುಗಳನ್ನೆಲ್ಲಾ ಪಡೆಯುವಿರಿ,” ಎಂದರು.</verse>
				<verse number="23">ಅನಂತರ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿದ್ದಾಗ, ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿನ ಬಳಿಗೆ ಬಂದು, “ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.</verse>
				<verse number="24">ಅದಕ್ಕೆ ಯೇಸು, “ನಾನು ಸಹ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ; ಅದಕ್ಕೆ ನೀವು ನನಗೆ ಉತ್ತರ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ. ಎಂದು ಹೇಳಿ,</verse>
				<verse number="25">ದೀಕ್ಷಾಸ್ನಾನ ಕೊಡುವ ಅಧಿಕಾರವು ಯೋಹಾನನಿಗೆ ಎಲ್ಲಿಂದ ಬಂತು? ಪರಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ?” ಎಂದು ಕೇಳಿದ್ದಕ್ಕೆ, ಅವರು ತಮ್ಮತಮ್ಮೊಳಗೆ ತರ್ಕಿಸುತ್ತಾ, “ಪರಲೋಕದಿಂದ ಎಂದು ನಾವು ಹೇಳಿದರೆ, ‘ನೀವು ಏಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವರು.</verse>
				<verse number="26">‘ಮನುಷ್ಯರಿಂದ ಬಂತು,’ ಎಂದು ಹೇಳಿದರೆ ಜನರಿಗೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಗೌರವಿಸುತ್ತಾರೆ,” ಎಂದುಕೊಂಡರು.</verse>
				<verse number="27">ತರುವಾಯ ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ” ಎಂದರು. ಅದಕ್ಕೆ ಯೇಸು ಅವರಿಗೆ, “ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.</verse>
				<verse number="28">ಅನಂತರ ಯೇಸು, “ನಿಮಗೇನು ಅನಿಸುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷಿಯ ತೋಟದಲ್ಲಿ ಕೆಲಸ ಮಾಡು,’ ಎಂದು ಹೇಳಿದನು.</verse>
				<verse number="29">“ಮಗನು ಉತ್ತರವಾಗಿ, ‘ನಾನು ಹೋಗುವುದಿಲ್ಲ’ ಎಂದು ಹೇಳಿ, ಅನಂತರ ಪಶ್ಚಾತ್ತಾಪಪಟ್ಟು ತೋಟಕ್ಕೆ ಹೋದನು.</verse>
				<verse number="30">“ಆಮೇಲೆ ತಂದೆ ಎರಡನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಉತ್ತರವಾಗಿ, ‘ಅಪ್ಪಾ, ನಾನು ಹೋಗುತ್ತೇನೆ,’ ಎಂದು ಹೇಳಿದರೂ ಹೋಗಲಿಲ್ಲ.</verse>
				<verse number="31">“ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ನಡೆದವನು?” ಎಂದು ಕೇಳಲು ಅವರು ಯೇಸುವಿಗೆ, “ಮೊದಲನೆಯವನೇ,” ಎಂದರು. ಆಗ ಯೇಸು ಅವರಿಗೆ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲು ದೇವರ ರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ.</verse>
				<verse number="32">ಏಕೆಂದರೆ ಯೋಹಾನನು ನೀತಿ ಮಾರ್ಗದೊಡನೆ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಅವನನ್ನು ನಂಬಿದರು. ನೀವು ಇದನ್ನು ಕಂಡ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.”</verse>
				<verse number="33">“ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಯಜಮಾನನು ದ್ರಾಕ್ಷಿಯ ತೋಟವನ್ನು ಮಾಡಿ ಅದರ ಸುತ್ತಲೂ ಬೇಲಿ ಹಾಕಿದನು. ಅದರೊಳಗೆ ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ಗೇಣಿಗೆ ಕೊಟ್ಟು ದೂರದೇಶಕ್ಕೆ ಹೋದನು.</verse>
				<verse number="34">ಫಲದ ಕಾಲ ಸಮೀಪಿಸಿದಾಗ, ತನ್ನ ಫಲಗಳನ್ನು ಪಡೆದುಕೊಳ್ಳುವುದಕ್ಕೆ ತನ್ನ ಸೇವಕರನ್ನು ಗೇಣಿಗೆದಾರರ ಬಳಿಗೆ ಕಳುಹಿಸಿದನು.</verse>
				<verse number="35">“ಆಗ ಗೇಣಿಗೆದಾರರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು, ಇನ್ನೊಬ್ಬನನ್ನು ಕೊಂದುಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು.</verse>
				<verse number="36">ಯಜಮಾನನು ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು. ಗೇಣಿಗೆದಾರರು ಅವರಿಗೂ ಹಾಗೆಯೇ ಮಾಡಿದರು.</verse>
				<verse number="37">ಕೊನೆಗೆ ಯಜಮಾನನು, ‘ಅವರು ನನ್ನ ಮಗನಿಗಾದರೂ ಮರ್ಯಾದೆ ಕೊಡುವರು’ ಎಂದುಕೊಂಡು ತನ್ನ ಮಗನನ್ನು ಅವರ ಬಳಿಗೆ ಕಳುಹಿಸಿದನು.</verse>
				<verse number="38">“ಆದರೆ ಗೇಣಿಗೆದಾರರು ಆ ಮಗನನ್ನು ನೋಡಿ ತಮ್ಮತಮ್ಮೊಳಗೆ, ‘ಇವನೇ ಬಾಧ್ಯಸ್ಥನು. ಬನ್ನಿರಿ, ನಾವು ಇವನನ್ನು ಕೊಂದು ಇವನ ಆಸ್ತಿಯನ್ನು ಕಿತ್ತುಕೊಳ್ಳೋಣ,’ ಎಂದುಕೊಂಡು,</verse>
				<verse number="39">ಅವನನ್ನು ಹಿಡಿದು ದ್ರಾಕ್ಷಿಯ ತೋಟದಿಂದ ಹೊರಗೆ ಹಾಕಿ ಅವನನ್ನು ಕೊಂದುಹಾಕಿದರು.</verse>
				<verse number="40">“ಹೀಗಿರುವುದರಿಂದ ದ್ರಾಕ್ಷಿತೋಟದ ಯಜಮಾನನೇ ಬಂದಾಗ, ಆ ಗೇಣಿಗೆದಾರರಿಗೆ ಏನು ಮಾಡುವನು?” ಎಂದು ಯೇಸು ಕೇಳಲು,</verse>
				<verse number="41">ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವಿಗೆ, “ಅವನು ಆ ದುಷ್ಟ ಮನುಷ್ಯರನ್ನು ಕ್ರೂರವಾಗಿ ಸಂಹರಿಸುವನು. ತಕ್ಕ ಕಾಲದಲ್ಲಿ ತನಗೆ ಫಲಗಳನ್ನು ಸಲ್ಲಿಸುವ ಬೇರೆ ಗೇಣಿಗೆದಾರರಿಗೆ ತನ್ನ ದ್ರಾಕ್ಷಿತೋಟವನ್ನು ಗೇಣಿಗೆ ಕೊಡುವನು,” ಎಂದು ಹೇಳಿದರು.</verse>
				<verse number="42">ಯೇಸು ಅವರಿಗೆ, “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದಲೇ ಆಯಿತು. ಇದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾಗಿ ತೋರುತ್ತದೆ,’ ಎಂಬುದನ್ನು ನೀವು ಪವಿತ್ರ ವೇದದಲ್ಲಿ ಎಂದೂ ಓದಲಿಲ್ಲವೇ?</verse>
				<verse number="43">“ಆದ್ದರಿಂದ, ದೇವರ ರಾಜ್ಯವು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನರಿಗೆ ಕೊಡಲಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.</verse>
				<verse number="44">ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು, ಆದರೆ ಇದೇ ಕಲ್ಲು ಯಾವನ ಮೇಲೆ ಬೀಳುವುದೋ ಅವನನ್ನು ಅದು ಜಜ್ಜಿ ಹೋಗುವಂತೆ ಮಾಡುವುದು,” ಎಂದರು.</verse>
				<verse number="45">ಮುಖ್ಯಯಾಜಕರೂ ಫರಿಸಾಯರೂ ಯೇಸುವಿನ ಸಾಮ್ಯಗಳನ್ನು ಕೇಳಿದಾಗ, ತಮ್ಮ ವಿಷಯದಲ್ಲಿಯೇ ಅದನ್ನು ಹೇಳಿದರೆಂದು ಅರ್ಥಮಾಡಿಕೊಂಡರು.</verse>
				<verse number="46">ಅವರು ಯೇಸುವನ್ನು ಹಿಡಿಯುವುದಕ್ಕೆ ಪ್ರಯತ್ನಿಸಿದರು. ಆದರೂ ಜನಸಮೂಹಕ್ಕೆ ಭಯಪಟ್ಟರು. ಏಕೆಂದರೆ ಜನರು ಯೇಸುವನ್ನು ಪ್ರವಾದಿಯೆಂದು ನಂಬಿದ್ದರು.</verse>
			</chapter>
			<chapter number="22">
				<verse number="1">ಯೇಸು ಪುನಃ ಸಾಮ್ಯಗಳ ಮೂಲಕ ಅವರ ಕೂಡ ಮಾತನಾಡುತ್ತಾ:</verse>
				<verse number="2">“ಪರಲೋಕ ರಾಜ್ಯವು ಮಗನ ಮದುವೆ ಮಾಡಿದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ.</verse>
				<verse number="3">ಅವನು ಮದುವೆಗೆ ಆಹ್ವಾನಿತರಾಗಿದ್ದವರನ್ನು ಕರೆಯುವುದಕ್ಕೆ ತನ್ನ ಸೇವಕರನ್ನು ಕಳುಹಿಸಿದನು. ಆದರೆ ಅವರು ಬರಲು ಒಪ್ಪಲಿಲ್ಲ.</verse>
				<verse number="4">“ಅವನು ಪುನಃ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ, ‘ಇಗೋ ಔತಣವು ಸಿದ್ಧವಾಗಿದೆ. ಶ್ರೇಷ್ಠ ಔತಣ ಮಾಡಿಸಿದ್ದೇನೆ: ಎಲ್ಲವೂ ಸಿದ್ಧವಾಗಿವೆ. ಮದುವೆಗೆ ಬನ್ನಿರಿ ಎಂದು ಆಹ್ವಾನಿತರಿಗೆ ಹೇಳಿರಿ,’ ಎಂದನು.</verse>
				<verse number="5">“ಆದರೆ ಅವರು ಅದನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟು ಹೋದರು.</verse>
				<verse number="6">ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನಪಡಿಸಿ, ಅವರನ್ನು ಕೊಂದುಹಾಕಿದರು.</verse>
				<verse number="7">ಆದರೆ ಅರಸನು ಅದನ್ನು ಕೇಳಿ ಬಹುಕೋಪಗೊಂಡು ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.</verse>
				<verse number="8">“ತರುವಾಯ ಅವನು ತನ್ನ ಸೇವಕರಿಗೆ, ‘ಮದುವೆಯ ಔತಣ ಸಿದ್ಧವಾಗಿದೆ, ಆದರೆ ಆಹ್ವಾನಿತರು ಸಿದ್ಧರಾಗಿರಲಿಲ್ಲ.</verse>
				<verse number="9">ಆದ್ದರಿಂದ ನೀವು ಮುಖ್ಯ ಬೀದಿಗಳಿಗೆ ಹೊರಟುಹೋಗಿ ಅಲ್ಲಿ ಕಂಡವರನ್ನೆಲ್ಲಾ ಮದುವೆಗೆ ಆಹ್ವಾನಿಸಿರಿ,’ ಎಂದನು.</verse>
				<verse number="10">ಆಗ ಆ ಸೇವಕರು ಮುಖ್ಯ ಬೀದಿಗಳಿಗೆ ಹೋಗಿ ತಾವು ಕಂಡ ಕೆಟ್ಟವರನ್ನೂ ಒಳ್ಳೆಯವರನ್ನೂ ಕರೆತಂದರು. ಹೀಗೆ ಮದುವೆ ಮಂಟಪವು ಅತಿಥಿಗಳಿಂದ ತುಂಬಿಹೋಯಿತು.</verse>
				<verse number="11">“ಅನಂತರ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದಾಗ, ಅಲ್ಲಿ ಮದುವೆಯ ವಸ್ತ್ರವಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಕಂಡನು.</verse>
				<verse number="12">ಅರಸನು ಆ ಮನುಷ್ಯನಿಗೆ, ‘ಸ್ನೇಹಿತನೇ, ಮದುವೆಯ ವಸ್ತ್ರವಿಲ್ಲದೆ ನೀನು ಒಳಗೆ ಹೇಗೆ ಬಂದೆ?’ ಎಂದು ಕೇಳಲು ಅವನು ಸುಮ್ಮನಿದ್ದನು.</verse>
				<verse number="13">“ಆಗ ಅರಸನು ಸೇವಕರಿಗೆ, ‘ಅವನ ಕೈಕಾಲುಗಳನ್ನು ಕಟ್ಟಿ ತೆಗೆದುಕೊಂಡು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಹಲ್ಲು ಕಡಿಯುತ್ತಾ ಗೋಳಾಡುತ್ತಿರಲಿ,’ ಎಂದು ಹೇಳಿದನು.</verse>
				<verse number="14">“ಹೀಗೆಯೇ ಆಹ್ವಾನಿತರಾದವರು ಅನೇಕರು, ಆದರೆ ಆಯ್ಕೆಯಾದವರು ಕೆಲವರು ಮಾತ್ರ,” ಎಂದನು.</verse>
				<verse number="15">ಆಗ ಫರಿಸಾಯರು ಹೊರಟುಹೋಗಿ ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸಬೇಕೆಂದು ಆಲೋಚನೆ ಮಾಡಿಕೊಂಡರು.</verse>
				<verse number="16">ಅವರು ತಮ್ಮ ಶಿಷ್ಯರನ್ನು ಹೆರೋದ್ಯರೊಂದಿಗೆ ಯೇಸುವಿನ ಬಳಿಗೆ ಕಳುಹಿಸಿ, “ಬೋಧಕರೇ, ನೀವು ಸತ್ಯವಂತರು, ದೇವರ ಮಾರ್ಗವನ್ನು ಸತ್ಯದಿಂದಲೇ ಬೋಧಿಸುವವರು, ನೀವು ಯಾರನ್ನೂ ಲಕ್ಷ್ಯ ಮಾಡುವವರಲ್ಲ, ನೀವು ಮುಖದಾಕ್ಷಿಣ್ಯ ಮಾಡುವವರೂ ಅಲ್ಲ ಎಂದು ನಮಗೆ ಗೊತ್ತಿದೆ.</verse>
				<verse number="17">ಆದ್ದರಿಂದ ಕೈಸರನಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಅಲ್ಲವೋ? ನಿಮ್ಮ ಅಭಿಪ್ರಾಯವೇನು? ನಮಗೆ ಹೇಳು,” ಎಂದರು.</verse>
				<verse number="18">ಯೇಸು ಅವರ ಕುಯುಕ್ತಿಯನ್ನು ತಿಳಿದುಕೊಂಡು, “ಕಪಟಿಗಳೇ, ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ?</verse>
				<verse number="19">ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ,” ಎಂದರು. ಆಗ ಅವರು ಒಂದು ನಾಣ್ಯವನ್ನು ತಂದು ಕೊಟ್ಟರು.</verse>
				<verse number="20">ಯೇಸು ಅವರಿಗೆ, “ಇದರ ಮುಖ ಮುದ್ರೆಯು ಮತ್ತು ಇದರ ಮೇಲಿರುವ ಲಿಪಿ ಯಾರದು?” ಎಂದು ಕೇಳಿದರು.</verse>
				<verse number="21">ಅದಕ್ಕೆ ಅವರು, “ಕೈಸರನದು,” ಎಂದರು. ಆಗ ಯೇಸು, “ಕೈಸರನಿಗೆ ಸಲ್ಲತಕ್ಕದ್ದನ್ನು ಕೈಸರನಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಕೊಡಿರಿ,” ಎಂದರು.</verse>
				<verse number="22">ಅವರು ಇದನ್ನು ಕೇಳಿ ಆಶ್ಚರ್ಯಪಟ್ಟು, ಯೇಸುವನ್ನು ಬಿಟ್ಟು ಹೊರಟು ಹೋದರು.</verse>
				<verse number="23">ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಅದೇ ದಿನದಲ್ಲಿ ಯೇಸುವಿನ ಬಳಿಗೆ ಬಂದು,</verse>
				<verse number="24">“ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ತಮ್ಮನು ವಿಧವೆಯನ್ನು ಮದುವೆಯಾಗಿ ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ಹೇಳಿದ್ದಾನೆ.</verse>
				<verse number="25">ಹೀಗಿರಲಾಗಿ ನಮ್ಮಲ್ಲಿ ಏಳುಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆಮಾಡಿಕೊಂಡು ಸತ್ತನು. ಸಂತಾನವಿಲ್ಲದ ಕಾರಣ ತನ್ನ ಹೆಂಡತಿಯನ್ನು ತನ್ನ ತಮ್ಮನಿಗೆ ಬಿಟ್ಟನು.</verse>
				<verse number="26">ಅದರಂತೆಯೇ ಎರಡನೆಯವನು ಮತ್ತು ಮೂರನೆಯವನು ಹೀಗೆ ಏಳನೆಯವನವರೆಗೂ ಸಂಭವಿಸಿತು.</verse>
				<verse number="27">ಕಡೆಯದಾಗಿ, ಆ ಸ್ತ್ರೀಯೂ ಸತ್ತಳು.</verse>
				<verse number="28">ಆದ್ದರಿಂದ, ಪುನರುತ್ಥಾನದ ಜೀವನದಲ್ಲಿ, ಆ ಏಳುಮಂದಿಯಲ್ಲಿ ಆಕೆ ಯಾರಿಗೆ ಹೆಂಡತಿಯಾಗಿರುವಳು? ಏಕೆಂದರೆ ಅವರೆಲ್ಲರೂ ಆಕೆಯನ್ನು ಮದುವೆ ಮಾಡಿಕೊಂಡಿದ್ದರಲ್ಲಾ?” ಎಂದು ಕೇಳಿದರು.</verse>
				<verse number="29">ಅದಕ್ಕೆ ಯೇಸು ಉತ್ತರವಾಗಿ, “ನೀವು ಪವಿತ್ರ ವೇದವನ್ನಾಗಲಿ ದೇವರ ಶಕ್ತಿಯನ್ನಾಗಲಿ ಅರ್ಥ ಮಾಡಿಕೊಳ್ಳದೆ ತಪ್ಪುತ್ತಿದ್ದೀರಿ.</verse>
				<verse number="30">ಏಕೆಂದರೆ ಪುನರುತ್ಥಾನದ ಜೀವನದಲ್ಲಿ ಅವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.</verse>
				<verse number="31">ಆದರೆ ಸತ್ತವರ ಪುನರುತ್ಥಾನದ ವಿಷಯವಾಗಿ,</verse>
				<verse number="32">‘ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಆಗಿದ್ದೇನೆ,’ ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ,” ಎಂದು ಹೇಳಿದರು.</verse>
				<verse number="33">ಜನಸಮೂಹದವರು ಇದನ್ನು ಕೇಳಿದಾಗ, ಯೇಸುವಿನ ಬೋಧನೆಗೆ ವಿಸ್ಮಯಗೊಂಡರು.</verse>
				<verse number="34">ಯೇಸು ಸದ್ದುಕಾಯರ ಬಾಯನ್ನು ಮುಚ್ಚಿದನೆಂದು ಫರಿಸಾಯರು ಕೇಳಿದಾಗ ಅವರು ಯೇಸುವಿನ ಬಳಿಗೆ ಬಂದರು.</verse>
				<verse number="35">ಅವರಲ್ಲಿ ಮೋಶೆಯ ನಿಯಮ ಬೋಧಕನಾಗಿದ್ದ ಒಬ್ಬನು, ಯೇಸುವನ್ನು ಪರೀಕ್ಷಿಸುವುದಕ್ಕಾಗಿ,</verse>
				<verse number="36">“ಬೋಧಕರೇ, ನಿಯಮದಲ್ಲಿ ಅತ್ಯಂತ ಮಹಾ ಆಜ್ಞೆ ಯಾವುದು?” ಎಂದು ಪ್ರಶ್ನಿಸಿದನು.</verse>
				<verse number="37">ಯೇಸು ಅವನಿಗೆ, “ ‘ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು.’</verse>
				<verse number="38">ಇದೇ ಅತ್ಯಂತ ಮಹಾ ಆಜ್ಞೆಯೂ ಮೊದಲನೆಯ ಆಜ್ಞೆಯೂ ಆಗಿದೆ.</verse>
				<verse number="39">ಇದರಂತೆಯೇ ಇರುವ ಎರಡನೆಯ ಆಜ್ಞೆಯು: ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ.</verse>
				<verse number="40">ಇಡೀ ನಿಯಮವೂ ಪ್ರವಾದಿಗಳ ಗ್ರಂಥಗಳೂ ಈ ಎರಡು ಆಜ್ಞೆಗಳ ಮೇಲೆ ಆಧಾರಗೊಂಡಿವೆ,” ಎಂದರು.</verse>
				<verse number="41">ಫರಿಸಾಯರು ಕೂಡಿಬಂದಿದ್ದಾಗ ಯೇಸು ಅವರಿಗೆ,</verse>
				<verse number="42">“ಕ್ರಿಸ್ತನ ವಿಷಯವಾಗಿ ನಿಮ್ಮ ಅಭಿಪ್ರಾಯವೇನು? ಆತನು ಯಾರ ಪುತ್ರನು?” ಎಂದು ಕೇಳಿದ್ದಕ್ಕೆ ಅವರು ಯೇಸುವಿಗೆ, “ದಾವೀದನ ಪುತ್ರನು,” ಎಂದರು.</verse>
				<verse number="43">“ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ, ‘ಕರ್ತನು’ ಎಂದು ಕರೆದು,</verse>
				<verse number="44">“ ‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದದಡಿಯಲ್ಲಿ ಹಾಕುವವರೆಗೆ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು,” ’ ಎಂದು ಹೇಳಿದನಲ್ಲವೇ?</verse>
				<verse number="45">ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರೇ’ ಎಂದು ಕರೆಯುವುದಾದರೆ, ಆತನು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದನು.</verse>
				<verse number="46">ಅದಕ್ಕೆ ಯಾರೂ ಒಂದು ಮಾತನ್ನು ಸಹ ಯೇಸುವಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರಿಗೂ ಧೈರ್ಯ ಬರಲಿಲ್ಲ.</verse>
			</chapter>
			<chapter number="23">
				<verse number="1">ಯೇಸು ಜನಸಮೂಹಕ್ಕೂ ತಮ್ಮ ಶಿಷ್ಯರಿಗೂ</verse>
				<verse number="2">ಹೇಳಿದ್ದೇನೆಂದರೆ: “ನಿಯಮ ಬೋಧಕರೂ ಫರಿಸಾಯರೂ ಮೋಶೆಯ ಆಸನದಲ್ಲಿ ಕುಳಿತಿದ್ದಾರೆ.</verse>
				<verse number="3">ಆದ್ದರಿಂದ ಅವರು ನಿಮಗೆ ಹೇಳುವುದನ್ನೆಲ್ಲಾ ಅನುಸರಿಸಿ ನಡೆಯಿರಿ. ಆದರೆ ಅವರ ನಡತೆಗಳ ಪ್ರಕಾರ ನೀವು ನಡೆಯಬೇಡಿರಿ. ಏಕೆಂದರೆ ಅವರು ಹೇಳಿದಂತೆ ಮಾಡುವುದಿಲ್ಲ.</verse>
				<verse number="4">ಹೊರುವುದಕ್ಕೆ ಭಾರವಾದ ಮತ್ತು ಹೊರಲಾಗದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಅವರು ಹೊರಿಸುತ್ತಾರೆ. ತಾವಾದರೋ ತಮ್ಮ ಬೆರಳಿನಿಂದಲೂ ಅವುಗಳನ್ನು ಮುಟ್ಟುವುದಿಲ್ಲ.</verse>
				<verse number="5">“ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡುತ್ತಾರೆ. ಅವರು ತಮ್ಮ ಬಾಹುಗಳ ಮೇಲೆ ದೇವರ ವಾಕ್ಯವುಳ್ಳ ಡಬ್ಬಿಗಳನ್ನು ಮತ್ತು ಹಣೆಯ ಮೇಲೆ ಅಗಲ ಪಟ್ಟಿಗಳನ್ನು ಮಾಡಿ ಉಡುಪುಗಳ ಅಂಚುಗಳನ್ನು ಉದ್ದಮಾಡುತ್ತಾರೆ.</verse>
				<verse number="6">ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ</verse>
				<verse number="7">ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ ಮತ್ತು ಜನರಿಂದ, ‘ಬೋಧಕರೇ,’ ಎಂದು ಕರೆಯಿಸಿಕೊಳ್ಳಲು ಅವರು ಇಚ್ಛಿಸುತ್ತಾರೆ.</verse>
				<verse number="8">“ಆದರೆ ನೀವು, ‘ಬೋಧಕರು,’ ಎಂದು ಕರೆಯಿಸಿಕೊಳ್ಳಬೇಡಿರಿ. ಏಕೆಂದರೆ ನಿಮಗಿರುವ ಬೋಧಕರು ಒಬ್ಬರೇ ನೀವೆಲ್ಲರೂ ಸಹೋದರರು.</verse>
				<verse number="9">ಭೂಮಿಯಲ್ಲಿ ಯಾರನ್ನೂ ‘ತಂದೆ’ ಎಂದು ಕರೆಯಬೇಡಿರಿ, ಪರಲೋಕದಲ್ಲಿ ಇರುವವರೇ ನಿಮ್ಮ ತಂದೆ.</verse>
				<verse number="10">ಗುರುವೆಂದೂ ಕರೆಯಿಸಿಕೊಳ್ಳಬೇಡಿರಿ. ಏಕೆಂದರೆ ಕ್ರಿಸ್ತನೊಬ್ಬನೇ ನಿಮ್ಮ ಗುರುವು.</verse>
				<verse number="11">ಆದರೆ ನಿಮ್ಮಲ್ಲಿ ಅತಿ ದೊಡ್ಡವನಾಗಿರುವವನು ನಿಮ್ಮ ಸೇವಕನಾಗಿರಬೇಕು.</verse>
				<verse number="12">ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವವರು ತಗ್ಗಿನ ಅನುಭವ ಹೊಂದುವರು. ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಉನ್ನತ ಅನುಭವ ಹೊಂದುವರು.</verse>
				<verse number="13">“ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.</verse>
				<verse number="14">“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ. ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ. ಆದ್ದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ.</verse>
				<verse number="15">“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ ನಿಮಗೆ ಕಷ್ಟ! ಏಕೆಂದರೆ ಒಬ್ಬನನ್ನು ಮತಾಂತರ ಮಾಡುವುದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ. ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕಕ್ಕೆ ಗುರಿಯಾಗುವಂತೆ ಮಾಡುತ್ತೀರಿ.</verse>
				<verse number="16">“ಕುರುಡರಾದ ಮಾರ್ಗದರ್ಶಕರೇ! ನಿಮಗೆ ಕಷ್ಟ, ‘ಯಾವನಾದರೂ ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಎನ್ನುತ್ತೀರಿ. ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಅದನ್ನು ಕೊಟ್ಟುಬಿಡಬೇಕು,’ ಎನ್ನುತ್ತೀರಿ.</verse>
				<verse number="17">ಮೂರ್ಖರೇ, ಕುರುಡರೇ, ಯಾವುದು ದೊಡ್ಡದು? ಚಿನ್ನವೋ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?</verse>
				<verse number="18">‘ಯಾರಾದರೂ ಬಲಿಪೀಠದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆ ಮೇಲೆ ಆಣೆಯಿಟ್ಟರೆ ಅವನು ಅದನ್ನು ಕೊಟ್ಟುಬಿಡಬೇಕು,’ ಎನ್ನುತ್ತೀರಿ.</verse>
				<verse number="19">ಕುರುಡರೇ, ಯಾವುದು ದೊಡ್ಡದು? ಕಾಣಿಕೆಯೋ ಕಾಣಿಕೆಯನ್ನು ಪಾವನ ಮಾಡುವ ಬಲಿಪೀಠವೋ?</verse>
				<verse number="20">ಆದ್ದರಿಂದ, ಬಲಿಪೀಠದ ಮೇಲೆ ಆಣೆಯಿಡುವವನು ಅದರ ಮೇಲೆಯೂ ಅದರಲ್ಲಿರುವ ಎಲ್ಲದರ ಮೇಲೆಯೂ ಆಣೆಯಿಡುವವನಾಗಿದ್ದಾನೆ.</verse>
				<verse number="21">ದೇವಾಲಯದ ಮೇಲೆ ಆಣೆಯಿಡುವವನು ಅದರ ಮೇಲೆಯೂ ಅದರಲ್ಲಿ ವಾಸಿಸುವ ದೇವರ ಮೇಲೆಯೂ ಆಣೆಯಿಡುವವನಾಗಿದ್ದಾನೆ.</verse>
				<verse number="22">ಪರಲೋಕದ ಮೇಲೆ ಆಣೆಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಆಸೀನರಾದ ದೇವರ ಮೇಲೆಯೂ ಆಣೆಯಿಡುವವನಾಗಿದ್ದಾನೆ.</verse>
				<verse number="23">“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಪುದೀನ, ಸದಾಪು, ಜೀರಿಗೆಗಳ ದಶಮಭಾಗವನ್ನು ಸಲ್ಲಿಸುತ್ತೀರಿ. ಆದರೆ ನಿಯಮದ ನ್ಯಾಯನೀತಿ, ಕರುಣೆ, ನಂಬಿಕೆ ಎಂಬ ಈ ಪ್ರಮುಖವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗಳೊಂದಿಗೆ ಆ ಬೇರೆಯವುಗಳನ್ನು ಬಿಟ್ಟುಬಿಡದೆ ಮಾಡಬೇಕಾಗಿತ್ತು.</verse>
				<verse number="24">ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೆ ಸೋಸುತ್ತೀರಿ ಒಂಟೆ ನುಂಗುತ್ತೀರಿ.</verse>
				<verse number="25">“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ, ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.</verse>
				<verse number="26">ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗವನ್ನು ಶುಚಿಮಾಡು. ಆಗ ಅವುಗಳ ಹೊರಭಾಗವೂ ಶುಚಿಯಾಗುವುದು.</verse>
				<verse number="27">“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಸುಣ್ಣ ಹಚ್ಚಿದ ಸಮಾಧಿಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ. ಆದರೆ ಒಳಗೆ ಸತ್ತವರ ಎಲುಬುಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರುತ್ತವೆ.</verse>
				<verse number="28">ಅದರಂತೆಯೇ, ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ. ಆದರೆ ನೀವು ಒಳಗೆ ಕಪಟದಿಂದಲೂ ಅನ್ಯಾಯದಿಂದಲೂ ತುಂಬಿದವರಾಗಿದ್ದೀರಿ.</verse>
				<verse number="29">“ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.</verse>
				<verse number="30">ಆದರೆ, ‘ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತಪಾತದಲ್ಲಿ ಪಿತೃಗಳೊಂದಿಗೆ ಪಾಲುಗಾರರಾಗುತ್ತಿರಲಿಲ್ಲ’ ಎಂದು ಹೇಳುತ್ತೀರಿ.</verse>
				<verse number="31">ಆದ್ದರಿಂದ ನೀವು ಆ ಪ್ರವಾದಿಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.</verse>
				<verse number="32">ಹಾಗಾದರೆ ನಿಮ್ಮ ಪಿತೃಗಳ ಅಪರಾಧದ ಅಳತೆಯನ್ನು ನೀವೇ ಪೂರ್ಣಗೊಳಿಸಿರಿ.</verse>
				<verse number="33">“ಹಾವುಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆಯಿಂದ ಹೇಗೆ ತಪ್ಪಿಸಿಕೊಂಡೀರಿ?</verse>
				<verse number="34">ಆದ್ದರಿಂದ ನೋಡಿರಿ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ನಿಯಮ ಬೋಧಕರನ್ನೂ ನಿಮ್ಮ ಬಳಿಗೆ ಕಳುಹಿಸುತ್ತೇನೆ. ಅವರಲ್ಲಿ ಕೆಲವರನ್ನು ಕೊಲ್ಲುವಿರಿ, ಶಿಲುಬೆಗೆ ಏರಿಸುವಿರಿ. ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸುವಿರಿ.</verse>
				<verse number="35">ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲುಗೊಂಡು ದೇವಾಲಯಕ್ಕೂ ಬಲಿಪೀಠಕ್ಕೂ ನಡುವೆ ನೀವು ಕೊಂದುಹಾಕಿದ ಬರಕೀಯನ ಮಗ ಜಕರೀಯನ ರಕ್ತದವರೆಗೂ ಭೂಮಿಯಲ್ಲಿ ಸುರಿಸಲಾದ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವುದು.</verse>
				<verse number="36">ನಿಮಗೆ ನಿಜವಾಗಿ ಹೇಳುತ್ತೇನೆ: ಇವೆಲ್ಲವೂ ಈ ಸಂತತಿಯವರ ಮೇಲೆ ಬರುವವು.</verse>
				<verse number="37">“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.</verse>
				<verse number="38">ನೋಡಿರಿ, ನಿಮ್ಮ ದೇವಾಲಯವು ನಿಮಗೆ ಬರಿದಾಗಿ ಹಾಳುಬೀಳುವುದು.</verse>
				<verse number="39">ಏಕೆಂದರೆ, ‘ಕರ್ತನ ಹೆಸರಿನಲ್ಲಿ ಬರುವವರು ಧನ್ಯರು’ ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ಕಾಣುವುದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ” ಎಂದರು.</verse>
			</chapter>
			<chapter number="24">
				<verse number="1">ಯೇಸು ದೇವಾಲಯದಿಂದ ಹೊರಗೆ ಹೋದಾಗ ಅವರ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವುದಕ್ಕಾಗಿ ಯೇಸುವಿನ ಬಳಿಗೆ ಬಂದರು.</verse>
				<verse number="2">ಆಗ ಯೇಸು ಅವರಿಗೆ, “ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲಾಗುವವು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.</verse>
				<verse number="3">ಯೇಸು ಓಲಿವ್ ಗುಡ್ಡದ ಮೇಲೆ ಕುಳಿತುಕೊಂಡಾಗ, ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಈ ಸಂಗತಿಗಳು ಸಂಭವಿಸುವುದು ಯಾವಾಗ? ನಿನ್ನ ಆಗಮನದ ಹಾಗೂ ಲೋಕಾಂತ್ಯದ ಸೂಚನೆ ಏನು? ನಮಗೆ ತಿಳಿಸು,” ಎಂದು ಕೇಳಿದರು.</verse>
				<verse number="4">ಆಗ ಯೇಸು ಉತ್ತರವಾಗಿ ಅವರಿಗೆ, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ.</verse>
				<verse number="5">ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.</verse>
				<verse number="6">ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ, ಆದರೆ ನೀವು ಕಳವಳಗೊಳ್ಳದಂತೆ ನೋಡಿಕೊಳ್ಳಿರಿ. ಏಕೆಂದರೆ ಇವೆಲ್ಲವು ಸಂಭವಿಸುವುದು ಅಗತ್ಯ. ಆದರೆ ಇದು ಇನ್ನೂ ಅಂತ್ಯವಲ್ಲ.</verse>
				<verse number="7">ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಅಲ್ಲಲ್ಲಿ ಬರಗಾಲಗಳು ಮತ್ತು ಭೂಕಂಪಗಳು ಸಂಭವಿಸುತ್ತವೆ.</verse>
				<verse number="8">ಇವೆಲ್ಲವೂ ಪ್ರಸವವೇದನೆಯ ಪ್ರಾರಂಭ ಮಾತ್ರ.</verse>
				<verse number="9">“ಆಗ ಜನರು ನಿಮ್ಮನ್ನು ಹಿಂಸೆಪಡಿಸುವುದಕ್ಕಾಗಿ ಒಪ್ಪಿಸಿ ನಿಮ್ಮನ್ನು ಕೊಲ್ಲುವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗದವರು ನಿಮ್ಮನ್ನು ದ್ವೇಷಮಾಡುವರು.</verse>
				<verse number="10">ಆಗ ಅನೇಕರು ವಿಶ್ವಾಸದಿಂದ ಬಿದ್ದವರಾಗಿ ಒಬ್ಬರಿಗೊಬ್ಬರು ದ್ರೋಹ ಬಗೆಯುವರು ಮತ್ತು ಒಬ್ಬರನ್ನೊಬ್ಬರು ದ್ವೇಷಿಸುವರು.</verse>
				<verse number="11">ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿಸುವರು.</verse>
				<verse number="12">ಅನ್ಯಾಯವು ಹೆಚ್ಚಾಗುವುದರಿಂದ ಬಹುಜನರ ಪ್ರೀತಿಯು ತಣ್ಣಗಾಗುವುದು.</verse>
				<verse number="13">ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.</verse>
				<verse number="14">ಪರಲೋಕ ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಸರ್ವಜನಾಂಗಗಳಿಗೆ ಸಾಕ್ಷಿಯಾಗಿ ಸಾರಲಾಗುವದು, ತರುವಾಯ ಅಂತ್ಯ ಬರುವುದು.</verse>
				<verse number="15">“ಆದ್ದರಿಂದ ಪ್ರವಾದಿ ದಾನಿಯೇಲನಿಂದ ಹೇಳಿದ ಹಾಗೆ ‘ಅಸಹ್ಯ ವಸ್ತು’ ಪವಿತ್ರ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ, ಓದುವವನು ತಿಳಿದುಕೊಳ್ಳಲಿ.</verse>
				<verse number="16">ಆಗ ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.</verse>
				<verse number="17">ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತೆಗೆದುಕೊಳ್ಳುವುದಕ್ಕೆ ಕೆಳಗೆ ಇಳಿಯದಿರಲಿ.</verse>
				<verse number="18">ಹೊಲದಲ್ಲಿರುವವನು ತನ್ನ ಬಟ್ಟೆಗಳನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗದಿರಲಿ.</verse>
				<verse number="19">ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ!</verse>
				<verse number="20">ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲಿ, ಸಬ್ಬತ್ ದಿನದಲ್ಲಾಗಲಿ ಆಗದಂತೆ ಪ್ರಾರ್ಥಿಸಿರಿ.</verse>
				<verse number="21">ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ. ಇನ್ನು ಮುಂದೆಯೂ ಆಗುವುದಿಲ್ಲ.</verse>
				<verse number="22">“ಆ ದಿನಗಳನ್ನು ಕಡಿಮೆ ಮಾಡದಿದ್ದರೆ, ಒಬ್ಬನೂ ಉಳಿಯುವಂತಿಲ್ಲ. ಆದರೆ ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಲಾಗುವುದು.</verse>
				<verse number="23">ಆಗ ಯಾರಾದರೂ ನಿಮಗೆ, ‘ಇಗೋ ಕ್ರಿಸ್ತನು ಇಲ್ಲಿದ್ದಾನೆ! ಅಗೋ ಅಲ್ಲಿದ್ದಾನೆ!’ ಎಂದು ಹೇಳಿದರೆ ಅವನನ್ನು ನಂಬಬೇಡಿರಿ.</verse>
				<verse number="24">ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.</verse>
				<verse number="25">ನೋಡಿರಿ, ಮುಂಚಿತವಾಗಿ ನಾನು ನಿಮಗೆ ಹೇಳಿದ್ದೇನೆ.</verse>
				<verse number="26">“ಅವರು ನಿಮಗೆ, ‘ನೋಡಿ, ಆತನು ಅರಣ್ಯದಲ್ಲಿದ್ದಾನೆ’ ಎಂದು ಹೇಳಿದರೆ ಹೋಗಬೇಡಿರಿ. ‘ನೋಡಿ, ಆತನು ಒಳ ಕೋಣೆಯಲ್ಲಿದ್ದಾನೆ,’ ಎಂದು ಹೇಳಿದರೂ ನಂಬಬೇಡಿರಿ.</verse>
				<verse number="27">ಏಕೆಂದರೆ ಮಿಂಚು ಪೂರ್ವದಿಂದ ಮಿನುಗಿ ಪಶ್ಚಿಮದವರೆಗೆ ಹೊಳೆಯುವಂತೆಯೇ ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು.</verse>
				<verse number="28">ಹೆಣ ಇದ್ದಲ್ಲಿಗೆ, ಹದ್ದುಗಳು ಬಂದು ಸೇರುತ್ತವೆ.</verse>
				<verse number="29">“ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ, “ ‘ಸೂರ್ಯನು ಕತ್ತಲಾಗುವನು; ಚಂದ್ರನು ಕಾಂತಿಹೀನನಾಗುವನು. ಆಕಾಶದಿಂದ ನಕ್ಷತ್ರಗಳು ಬೀಳುವವು; ಮತ್ತು ಆಕಾಶದ ಶಕ್ತಿಗಳು ಕದಲುವವು.’</verse>
				<verse number="30">“ಆಗ ಮನುಷ್ಯಪುತ್ರನಾದ ನನ್ನ ಸೂಚನೆಯು ಆಕಾಶದಲ್ಲಿ ಕಾಣುವುದು. ಭೂಮಿಯ ಎಲ್ಲಾ ಜನಾಂಗದವರು ಗೋಳಾಡುವರು. ಮನುಷ್ಯಪುತ್ರನಾದ ನಾನು ಆಕಾಶದ ಮೇಘಗಳಲ್ಲಿ, ಶಕ್ತಿಯಿಂದಲೂ ಮಹಾಪ್ರಭಾವದಿಂದಲೂ ಬರುವುದನ್ನು ಅವರು ಕಾಣುವರು.</verse>
				<verse number="31">ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು. ಆಗ ಅವರು ಆತನಿಂದ ಆಯ್ಕೆಯಾದವರನ್ನು ನಾಲ್ಕು ದಿಕ್ಕುಗಳಿಂದಲೂ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.</verse>
				<verse number="32">“ಅಂಜೂರ ಮರದ ದೃಷ್ಟಾಂತದಿಂದ ಈ ಪಾಠವನ್ನು ಕಲಿತುಕೊಳ್ಳಿರಿ: ಅದರ ರೆಂಬೆ ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.</verse>
				<verse number="33">ಅದೇ ಪ್ರಕಾರ, ಇವೆಲ್ಲವೂ ಆಗುವುದನ್ನು ನೀವು ಕಾಣುವಾಗ, ಅಂತ್ಯವು ಬಾಗಿಲ ಹತ್ತಿರದಲ್ಲಿಯೇ ಇದೆ ಎಂದು ತಿಳಿದುಕೊಳ್ಳಿರಿ.</verse>
				<verse number="34">ಇವೆಲ್ಲವೂ ನೆರವೇರುವವರೆಗೆ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.</verse>
				<verse number="35">ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.</verse>
				<verse number="36">“ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ತಂದೆಗೆ ಹೊರತು ಯಾವ ಮನುಷ್ಯನಿಗಾಗಲಿ, ಪರಲೋಕದಲ್ಲಿರುವ ದೂತರಿಗಾಗಲಿ, ಮನುಷ್ಯಪುತ್ರನಾದ ನನಗೂ ತಿಳಿಯದು.</verse>
				<verse number="37">ಆದರೆ ನೋಹನ ದಿವಸಗಳು ಇದ್ದಂತೆಯೇ, ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು.</verse>
				<verse number="38">ಪ್ರಳಯವು ಬರುವುದಕ್ಕಿಂತ ಮುಂಚಿನ ಆ ದಿವಸಗಳಲ್ಲಿ, ನೋಹನು ನಾವೆಯಲ್ಲಿ ಸೇರಿದ ದಿವಸದವರೆಗೆ ಜನರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ, ಮದುವೆ ಮಾಡಿಕೊಡುತ್ತಾ ಇದ್ದರು.</verse>
				<verse number="39">ಜಲಪ್ರಳಯವು ಬಂದು ಅವರನ್ನು ಕೊಚ್ಚಿಕೊಂಡು ಹೋಗುವವರೆಗೂ ಅವರಿಗೆ ಅದು ತಿಳಿದಿರಲಿಲ್ಲ. ಹಾಗೆಯೇ ಮನುಷ್ಯಪುತ್ರನಾದ ನನ್ನ ಬರುವಿಕೆಯೂ ಇರುವುದು.</verse>
				<verse number="40">ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು.</verse>
				<verse number="41">ಇಬ್ಬರು ಹೆಂಗಸರು ಬೀಸುವ ಕಲ್ಲಿನಲ್ಲಿ ಬೀಸುತ್ತಿರುವಾಗ, ಒಬ್ಬಳನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬಳನ್ನು ಬಿಡಲಾಗುವುದು.</verse>
				<verse number="42">“ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರುತ್ತಾನೋ ನಿಮಗೇ ಗೊತ್ತಿಲ್ಲವಾದ್ದರಿಂದ ಎಚ್ಚರವಾಗಿರಿ.</verse>
				<verse number="43">ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾನೆಂದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಾಹಾಕದಂತೆ ಕಾಯುತ್ತಿದ್ದನೆಂದು ನೀವು ತಿಳಿದುಕೊಳ್ಳಿರಿ.</verse>
				<verse number="44">ಆದಕಾರಣ ನೀವು ಸಹ ಸಿದ್ಧವಾಗಿರಿ, ಏಕೆಂದರೆ ನೀವು ನಿರೀಕ್ಷಿಸದ ಸಮಯದಲ್ಲಿ ಮನುಷ್ಯಪುತ್ರನಾದ ನಾನು ಬರುತ್ತೇನೆ.</verse>
				<verse number="45">“ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ನಂಬಿಗಸ್ತನೂ ಜ್ಞಾನಿಯೂ ಆಗಿರುವ ಸೇವಕನು ಯಾರು?</verse>
				<verse number="46">ತನ್ನ ಯಜಮಾನನು ಬಂದಾಗ ಯಾವ ಸೇವಕನು ಸೇವೆ ಮಾಡುವುದನ್ನು ಕಾಣುವನೋ ಆ ಸೇವಕನು ಧನ್ಯನು.</verse>
				<verse number="47">ಅವನನ್ನು ಯಜಮಾನನು ತನ್ನ ಎಲ್ಲಾ ಆಸ್ತಿಯ ಮೇಲೆ ಆಡಳಿತಗಾರನಾಗಿ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.</verse>
				<verse number="48">ಆದರೆ ದುಷ್ಟ ಸೇವಕನು ತನ್ನ ಹೃದಯದಲ್ಲಿ, ‘ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ,’ ಎಂದು ಹೇಳಿಕೊಂಡು</verse>
				<verse number="49">ತನ್ನ ಜೊತೆಯ ಸೇವಕರನ್ನು ಹೊಡೆಯುತ್ತಾ, ಕುಡುಕರ ಸಂಗಡ ತಿನ್ನುವುದಕ್ಕೂ, ಕುಡಿಯುವುದಕ್ಕೂ ಪ್ರಾರಂಭಿಸುವುದಾದರೆ,</verse>
				<verse number="50">ಆ ಸೇವಕನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಸಮಯದಲ್ಲಿಯೂ ಅವನ ಯಜಮಾನನು ಬಂದು,</verse>
				<verse number="51">ಅವನನ್ನು ಕ್ರೂರವಾಗಿ ಹಿಂಸಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು. ಅಲ್ಲಿ ಗೋಳಾಟವೂ ಹಲ್ಲು ಕಡಿಯುವಿಕೆಯೂ ಇರುವವು.</verse>
			</chapter>
			<chapter number="25">
				<verse number="1">“ಪರಲೋಕ ರಾಜ್ಯವು ತಮ್ಮ ದೀಪಗಳನ್ನು ತೆಗೆದುಕೊಂಡು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋದ ಹತ್ತು ಮಂದಿ ಕನ್ಯೆಯರಿಗೆ ಹೋಲಿಕೆಯಾಗಿರುವುದು.</verse>
				<verse number="2">ಅವರಲ್ಲಿ ಐದು ಮಂದಿ ಬುದ್ಧಿವಂತೆಯರೂ ಐದು ಮಂದಿ ಬುದ್ಧಿಹೀನರೂ ಇದ್ದರು.</verse>
				<verse number="3">ಬುದ್ಧಿಹೀನರು, ತಮ್ಮ ದೀಪಗಳನ್ನು ತೆಗೆದುಕೊಂಡರು, ಆದರೆ ತಮ್ಮೊಂದಿಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.</verse>
				<verse number="4">ಬುದ್ಧಿವಂತೆಯರೋ, ತಮ್ಮ ದೀಪಗಳೊಂದಿಗೆ ಪಾತ್ರೆಯಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.</verse>
				<verse number="5">ಮದುಮಗನು ತಡಮಾಡಿದಾಗ ಅವರೆಲ್ಲರೂ ತೂಕಡಿಸುತ್ತಾ ನಿದ್ರೆ ಹೋದರು.</verse>
				<verse number="6">“ಮಧ್ಯರಾತ್ರಿಯಲ್ಲಿ, ‘ನೋಡಿರಿ, ಮದುಮಗನು ಬರುತ್ತಿದ್ದಾನೆ, ಅವನನ್ನು ಎದುರುಗೊಳ್ಳುವುದಕ್ಕಾಗಿ ಹೊರಡಿರಿ,’ ಎಂಬ ಕೂಗಾಯಿತು.</verse>
				<verse number="7">“ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು.</verse>
				<verse number="8">ಬುದ್ಧಿಹೀನರು ಬುದ್ಧಿವಂತೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿರಿ, ಏಕೆಂದರೆ ನಮ್ಮ ದೀಪಗಳು ಆರಿಹೋಗುತ್ತವೆ,’ ಎಂದರು.</verse>
				<verse number="9">“ಆದರೆ ಬುದ್ಧಿವಂತೆಯರು ಉತ್ತರವಾಗಿ, ‘ಹಾಗಲ್ಲ, ಅದು ನಮಗೂ ಸಾಲದೆ ಹೋದೀತು. ಆದ್ದರಿಂದ ನೀವು ಮಾರುವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡುಕೊಳ್ಳಿರಿ,’ ಎಂದರು.</verse>
				<verse number="10">“ಅವರು ಕೊಂಡುಕೊಳ್ಳುವುದಕ್ಕೆ ಹೋದಾಗ, ಮದುಮಗನು ಬಂದನು. ಆಗ ಸಿದ್ಧವಾಗಿದ್ದವರು ಆತನೊಂದಿಗೆ ಮದುವೆಯ ಔತಣಕ್ಕೆ ಒಳಗೆ ಹೋದರು. ತರುವಾಯ ಬಾಗಿಲು ಮುಚ್ಚಲಾಯಿತು.</verse>
				<verse number="11">“ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದರು.</verse>
				<verse number="12">“ಆದರೆ ಆತನು ಉತ್ತರವಾಗಿ, ‘ನಾನು ನಿಮ್ಮನ್ನು ಅರಿಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ,’ ಎಂದನು.</verse>
				<verse number="13">“ಆದ್ದರಿಂದ ಎಚ್ಚರವಾಗಿರಿ, ಏಕೆಂದರೆ ಮನುಷ್ಯಪುತ್ರನಾದ ನನ್ನ ಬರುವ ದಿನವನ್ನಾಗಲಿ ಗಳಿಗೆಯನ್ನಾಗಲಿ ನೀವು ಅರಿಯದವರಾಗಿದ್ದೀರಿ, ಎಂದರು.</verse>
				<verse number="14">“ಪರಲೋಕ ರಾಜ್ಯವು ದೂರದೇಶಕ್ಕೆ ಪ್ರಯಾಣ ಮಾಡುವ ಒಬ್ಬ ಮನುಷ್ಯನು ತನ್ನ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.</verse>
				<verse number="15">ಅವನು ಒಬ್ಬನಿಗೆ ಐದು ಚಿನ್ನದ ನಾಣ್ಯಗಳನ್ನು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು; ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ಕೊಟ್ಟು ಕೂಡಲೇ ಪ್ರಯಾಣಮಾಡಿದನು.</verse>
				<verse number="16">ಐದು ಚಿನ್ನದ ನಾಣ್ಯಗಳನ್ನು ಹೊಂದಿದವನು ಹೋಗಿ ಅವುಗಳಿಂದ ವ್ಯಾಪಾರಮಾಡಿ ಬೇರೆ ಐದು ಚಿನ್ನದ ನಾಣ್ಯಗಳನ್ನು ಸಂಪಾದಿಸಿದನು.</verse>
				<verse number="17">ಅದೇ ಪ್ರಕಾರ, ಎರಡು ಚಿನ್ನದ ನಾಣ್ಯಗಳನ್ನು ಹೊಂದಿದವನು ಸಹ ಇನ್ನು ಬೇರೆ ಎರಡು ಚಿನ್ನದ ನಾಣ್ಯಗಳನ್ನು ಸಂಪಾದಿಸಿದನು.</verse>
				<verse number="18">ಆದರೆ ಒಂದು ಚಿನ್ನದ ನಾಣ್ಯವನ್ನು ಹೊಂದಿದವನು ಹೋಗಿ ಭೂಮಿಯನ್ನು ಅಗೆದು, ತನ್ನ ಯಜಮಾನನ ಹಣವನ್ನು ಬಚ್ಚಿಟ್ಟನು.</verse>
				<verse number="19">“ಬಹುಕಾಲವಾದ ಮೇಲೆ ಆ ಸೇವಕರ ಯಜಮಾನನು ಬಂದು ಅವರಿಂದ ಲೆಕ್ಕ ಕೇಳಿದನು.</verse>
				<verse number="20">ಆಗ ಐದು ಚಿನ್ನದ ನಾಣ್ಯಗಳನ್ನು ಹೊಂದಿದ್ದವನು ಬಂದು ಬೇರೆ ಐದು ಚಿನ್ನದ ನಾಣ್ಯಗಳನ್ನು ತಂದು, ‘ಒಡೆಯನೇ, ನೀನು ನನಗೆ ಐದು ಚಿನ್ನದ ನಾಣ್ಯಗಳನ್ನು ಒಪ್ಪಿಸಿದ್ದೆ. ನೋಡು, ಅವುಗಳಲ್ಲದೆ ಇನ್ನೂ ಬೇರೆ ಐದು ಚಿನ್ನದ ನಾಣ್ಯಗಳನ್ನು ನಾನು ಸಂಪಾದಿಸಿದ್ದೇನೆ,’ ಎಂದನು.</verse>
				<verse number="21">“ಆಗ ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು.</verse>
				<verse number="22">“ಎರಡು ಚಿನ್ನದ ನಾಣ್ಯಗಳನ್ನು ಹೊಂದಿದ್ದವನು ಸಹ ಬಂದು, ‘ಒಡೆಯನೇ, ನೀನು ನನಗೆ ಎರಡು ಚಿನ್ನದ ನಾಣ್ಯಗಳನ್ನು ಒಪ್ಪಿಸಿದ್ದೆ. ನೋಡು, ಇನ್ನೂ ಎರಡು ಚಿನ್ನದ ನಾಣ್ಯಗಳನ್ನು ನಾನು ಸಂಪಾದಿಸಿದ್ದೇನೆ,’ ಎಂದನು.</verse>
				<verse number="23">“ಆಗ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ, ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು.</verse>
				<verse number="24">“ಆಗ ಒಂದು ಚಿನ್ನದ ನಾಣ್ಯ ಹೊಂದಿದ್ದವನು ಬಂದು, ‘ಒಡೆಯನೇ, ನೀನು ಬಿತ್ತದಿರುವಲ್ಲಿ ಕೊಯ್ಯುವವನೂ ತೂರದಿರುವಲ್ಲಿ ಕೂಡಿಸುವವನೂ ಆಗಿರುವ ಕಠಿಣ ಮನುಷ್ಯನೆಂದು ನಾನು ಬಲ್ಲೆನು.</verse>
				<verse number="25">ಆದ್ದರಿಂದ ನಾನು ಭಯಪಟ್ಟು ಹೋಗಿ ನಿನ್ನ ಚಿನ್ನದ ನಾಣ್ಯವನ್ನು ಭೂಮಿಯಲ್ಲಿ ಬಚ್ಚಿಟ್ಟೆನು. ನೋಡು, ನೀನು ಕೊಟ್ಟಿದ್ದನ್ನು ನಿನಗೇ ಕೊಡುತ್ತೇನೆ,’ ಎಂದನು.</verse>
				<verse number="26">“ಅದಕ್ಕೆ ಅವನ ಯಜಮಾನನು ಉತ್ತರವಾಗಿ, ‘ಮೈಗಳ್ಳನಾದ ದುಷ್ಟ ಸೇವಕನೇ, ನಾನು ಬಿತ್ತದಿರುವಲ್ಲಿ ಕೊಯ್ಯುವವನೆಂತಲೂ ತೂರದಿರುವಲ್ಲಿ ಕೂಡಿಸುವವನೆಂತಲೂ ನೀನು ತಿಳಿದಿದ್ದೀಯಲ್ಲಾ.</verse>
				<verse number="27">ಹಾಗಿದ್ದರೆ, ನೀನು ನನ್ನ ಹಣವನ್ನು ಬಡ್ಡಿ ಅಂಗಡಿಯಲ್ಲಿ ಕೊಡಬೇಕಾಗಿತ್ತು; ನಾನು ಬಂದಾಗ ಹಣವನ್ನು ಬಡ್ಡಿ ಸಮೇತವಾಗಿ ಪಡೆದುಕೊಳ್ಳುತ್ತಿದ್ದೆನು,’ ಎಂದು ಹೇಳಿ,</verse>
				<verse number="28">“ತನ್ನ ಸೇವಕರಿಗೆ, ‘ಅವನಿಂದ ಆ ಚಿನ್ನದ ನಾಣ್ಯವನ್ನು ತೆಗೆದುಕೊಂಡು ಹತ್ತು ಚಿನ್ನದ ನಾಣ್ಯಗಳು ಇದ್ದವನಿಗೆ ಕೊಡಿರಿ.</verse>
				<verse number="29">ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು, ಅವರಿಗೆ ಹೆಚ್ಚು ಸಮೃದ್ಧಿಯಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು.</verse>
				<verse number="30">ನಿಷ್ಪ್ರಯೋಜಕನಾದ ಆ ಸೇವಕನನ್ನು ನೀವು ಹೊರಗೆ ಕತ್ತಲೆಯಲ್ಲಿ ಹಾಕಿರಿ. ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು,’ ಎಂದನು.</verse>
				<verse number="31">“ಮನುಷ್ಯಪುತ್ರನಾದ ನಾನು ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ, ನನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವೆನು.</verse>
				<verse number="32">ನನ್ನ ಮುಂದೆ ಎಲ್ಲಾ ಜನಾಂಗದವರನ್ನು ಒಟ್ಟುಗೂಡಿಸಲಾಗುವುದು. ಆಗ ಕುರುಬನು ತನ್ನ ಕುರಿಗಳನ್ನು ಆಡುಗಳಿಂದ ಪ್ರತ್ಯೇಕಿಸುವಂತೆಯೇ ನಾನು ಅವರನ್ನು ಪ್ರತ್ಯೇಕಿಸುವೆನು.</verse>
				<verse number="33">ನಾನು ಕುರಿಗಳನ್ನು ನನ್ನ ಬಲಗಡೆಯಲ್ಲಿಯೂ ಆಡುಗಳನ್ನು ಎಡಗಡೆಯಲ್ಲಿಯೂ ನಿಲ್ಲಿಸುವೆನು.</verse>
				<verse number="34">“ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ.</verse>
				<verse number="35">ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ. ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಟ್ಟಿರಿ. ನಾನು ಪರದೇಶಿಯಾಗಿದ್ದೆನು, ನೀವು ನನಗೆ ಆಶ್ರಯ ಕೊಟ್ಟಿರಿ.</verse>
				<verse number="36">ನಾನು ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿದಿರಿ. ನಾನು ಅಸ್ವಸ್ಥನಾಗಿದ್ದೆನು, ನೀವು ನನ್ನನ್ನು ಉಪಚರಿಸಿದಿರಿ. ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ,’ ಎಂದು ಹೇಳುವೆನು.</verse>
				<verse number="37">“ಆಗ ಆ ನೀತಿವಂತರು ಉತ್ತರವಾಗಿ ನನಗೆ, ‘ಕರ್ತನೇ, ನೀನು ಯಾವಾಗ ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವುದಕ್ಕೆ ಕೊಟ್ಟೆವು?</verse>
				<verse number="38">ನೀನು ಪರದೇಶಿಯಾಗಿರುವುದನ್ನು ನಾವು ಯಾವಾಗ ಕಂಡು ನಿನಗೆ ಆಶ್ರಯ ಕೊಟ್ಟೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು?</verse>
				<verse number="39">ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನ ಬಳಿಗೆ ಬಂದೆವು?’ ಎಂದು ಕೇಳುವರು.</verse>
				<verse number="40">“ಅದಕ್ಕೆ ನಾನು ಉತ್ತರವಾಗಿ ಅವರಿಗೆ, ‘ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ನೀವು ಈ ನನ್ನ ಸಹೋದರರಲ್ಲಿ ಅತ್ಯಲ್ಪನಾದವನೊಬ್ಬನಿಗೆ, ಮಾಡಿದ್ದು ನನಗೇ ಮಾಡಿದಂತಾಯಿತು,’ ಎನ್ನುವೆನು.</verse>
				<verse number="41">“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.</verse>
				<verse number="42">ನಾನು ಹಸಿದಿದ್ದೆನು, ನೀವು ನನಗೆ ಊಟ ಕೊಡಲಿಲ್ಲ. ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿಯುವುದಕ್ಕೆ ಕೊಡಲಿಲ್ಲ.</verse>
				<verse number="43">ನಾನು ಪರದೇಶಿಯಾಗಿದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಳ್ಳಲಿಲ್ಲ. ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ. ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂದರ್ಶಿಸಲಿಲ್ಲ,’ ಎಂದು ಹೇಳುವೆನು.</verse>
				<verse number="44">“ಆಗ ಅವರು ಸಹ ಉತ್ತರವಾಗಿ ನನಗೆ, ‘ಕರ್ತನೇ, ನೀನು ಹಸಿದಿದ್ದನ್ನೂ ಬಾಯಾರಿದ್ದನ್ನೂ ಪರದೇಶಿಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ಯಾವಾಗ ನೋಡಿ ನಿನಗೆ ಉಪಚಾರಮಾಡಲಿಲ್ಲ?’ ಎಂದು ಕೇಳುವರು.</verse>
				<verse number="45">“ಆಗ ನಾನು ಅವರಿಗೆ ಉತ್ತರವಾಗಿ, ‘ನಾನು ನಿಮಗೆ ಸತ್ಯವಾಗಿ ಹೇಳುವುದೇನೆಂದರೆ, ನೀವು ಇವರಲ್ಲಿ ಅತ್ಯಲ್ಪನಾದ ಒಬ್ಬನಿಗೆ ಏನೇನು ಮಾಡಲಿಲ್ಲವೋ ಅದನ್ನು ನನಗೂ ಮಾಡಲಿಲ್ಲ,’ ಎಂದು ಹೇಳುವೆನು.</verse>
				<verse number="46">“ಹೀಗೆ ಇವರು ನಿತ್ಯವಾದ ಶಿಕ್ಷೆಗೆ ಒಳಗಾಗುವರು. ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು,” ಎಂದು ಹೇಳುವೆನು.</verse>
			</chapter>
			<chapter number="26">
				<verse number="1">ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತಮ್ಮ ಶಿಷ್ಯರಿಗೆ,</verse>
				<verse number="2">“ಎರಡು ದಿವಸಗಳಾದ ಮೇಲೆ ಪಸ್ಕಹಬ್ಬ ಇರುವುದೆಂದು ನೀವು ಬಲ್ಲಿರಿ. ಆಗ ಮನುಷ್ಯಪುತ್ರನಾದ ನನ್ನನ್ನು ಶಿಲುಬೆಗೆ ಹಾಕಲು ಹಿಡಿದುಕೊಡುವರು,” ಎಂದರು.</verse>
				<verse number="3">ಆಗ ಮುಖ್ಯಯಾಜಕರೂ ಜನರ ಹಿರಿಯರೂ ಒಟ್ಟಾಗಿ ಸೇರಿ, ಕಾಯಫನೆಂಬ ಮಹಾಯಾಜಕನ ಅರಮನೆಗೆ ಬಂದು</verse>
				<verse number="4">ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.</verse>
				<verse number="5">ಆದರೆ ಅವರು, “ಜನರಲ್ಲಿ ಗದ್ದಲವಾದೀತು, ಹಬ್ಬದಲ್ಲಿ ಬೇಡ,” ಎಂದರು.</verse>
				<verse number="6">ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿದ್ದರು.</verse>
				<verse number="7">ಯೇಸು ಅಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸುಗಂಧ ತೈಲದ ಭರಣಿಯೊಂದಿಗೆ ಯೇಸುವಿನ ಬಳಿಗೆ ಬಂದು, ಅದನ್ನು ಅವರ ತಲೆಯ ಮೇಲೆ ಸುರಿದಳು.</verse>
				<verse number="8">ಯೇಸುವಿನ ಶಿಷ್ಯರು ಇದನ್ನು ಕಂಡು ಕೋಪಗೊಂಡು, “ಏಕೆ ಈ ವ್ಯರ್ಥ ಖರ್ಚು?</verse>
				<verse number="9">ಈ ತೈಲವನ್ನು ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದರು.</verse>
				<verse number="10">ಯೇಸು ಅದನ್ನು ತಿಳಿದವರಾಗಿ ಅವರಿಗೆ, “ನೀವು ಏಕೆ ಈ ಸ್ತ್ರೀಗೆ ತೊಂದರೆಪಡಿಸುತ್ತೀರಿ? ಈಕೆ ನನಗೆ ಒಳ್ಳೆಯ ಕಾರ್ಯವನ್ನು ಮಾಡಿದ್ದಾಳೆ.</verse>
				<verse number="11">ಬಡವರು ಯಾವಾಗಲೂ ನಿಮ್ಮ ಸಂಗಡ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಸಂಗಡ ಇರುವುದಿಲ್ಲ.</verse>
				<verse number="12">ಈಕೆ ಈ ತೈಲವನ್ನು ನನ್ನ ದೇಹದ ಮೇಲೆ ಸುರಿದದ್ದರಿಂದ, ನನ್ನ ಶವಸಂಸ್ಕಾರಕ್ಕೆ ಸಿದ್ಧಮಾಡಿದ್ದಾಳೆ.</verse>
				<verse number="13">ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಲೋಕದಾದ್ಯಂತ ಎಲ್ಲೆಲ್ಲಿ ಸುವಾರ್ತೆಯು ಸಾರಲಾಗುವದೋ, ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು,” ಎಂದರು.</verse>
				<verse number="14">ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದ ಇಸ್ಕರಿಯೋತ ಎಂಬುವನು ಮುಖ್ಯಯಾಜಕರ ಬಳಿಗೆ ಹೋಗಿ,</verse>
				<verse number="15">“ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ?” ಎಂದನು. ಆಗ ಅವರು ಅವನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಎಣಿಸಿ ಕೊಟ್ಟರು.</verse>
				<verse number="16">ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಸಂದರ್ಭವನ್ನು ಕಾಯುತ್ತಿದ್ದನು.</verse>
				<verse number="17">ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ನೀವು ಪಸ್ಕದ ಊಟ ಮಾಡಲು ನಾವು ನಿಮಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ಬಯಸುತ್ತೀರಿ?” ಎಂದು ಕೇಳಿದರು.</verse>
				<verse number="18">ಅದಕ್ಕೆ ಯೇಸು, “ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ, ‘ನನ್ನ ಸಮಯವು ಸಮೀಪವಾಗಿದೆ. ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕರು ಕೇಳುತ್ತಾರೆ’ ಎಂಬುದಾಗಿ ಅವನಿಗೆ ಹೇಳಿರಿ,” ಎಂದರು.</verse>
				<verse number="19">ಯೇಸು ಅವರಿಗೆ ಆಜ್ಞಾಪಿಸಿದಂತೆ ಶಿಷ್ಯರು ಪಸ್ಕವನ್ನು ಸಿದ್ಧಮಾಡಿದರು.</verse>
				<verse number="20">ಸಂಜೆಯಾದಾಗ, ಯೇಸು ಹನ್ನೆರಡು ಮಂದಿ ಶಿಷ್ಯರೊಂದಿಗೆ ಊಟಕ್ಕೆ ಕುಳಿತುಕೊಂಡರು.</verse>
				<verse number="21">ಅವರು ಊಟಮಾಡುತ್ತಿದ್ದಾಗ ಯೇಸು, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಮಾಡುವನು,” ಎಂದರು.</verse>
				<verse number="22">ಆಗ ಅವರು ದುಃಖಪಟ್ಟು, “ಕರ್ತನೇ, ಅವನು ನಾನಲ್ಲವಲ್ಲಾ?” ಎಂದು ಅವರಲ್ಲಿ ಪ್ರತಿಯೊಬ್ಬರೂ ಯೇಸುವನ್ನು ಕೇಳಲಾರಂಭಿಸಿದರು.</verse>
				<verse number="23">ಅದಕ್ಕೆ ಯೇಸು ಉತ್ತರವಾಗಿ, “ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದಿದವನೇ ನನಗೆ ದ್ರೋಹ ಮಾಡುವನು.</verse>
				<verse number="24">ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದರು.</verse>
				<verse number="25">ಆಗ ಯೇಸುವನ್ನು ಹಿಡಿದುಕೊಡಬೇಕೆಂದಿದ್ದ ಯೂದನು, “ಗುರುವೇ, ಅವನು ನಾನಲ್ಲವಲ್ಲಾ?” ಎಂದನು. “ನೀನೇ ಹೇಳಿದ್ದೀ,” ಎಂದು ಯೇಸು ಉತ್ತರಕೊಟ್ಟರು.</verse>
				<verse number="26">ಅವರು ಊಟಮಾಡುತ್ತಿರುವಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ, ಮುರಿದು ತಮ್ಮ ಶಿಷ್ಯರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ,” ಎಂದರು.</verse>
				<verse number="27">ಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸ್ತುತಿ ಮಾಡಿ ಅವರಿಗೆ ಕೊಟ್ಟು, “ನೀವೆಲ್ಲರೂ ಇದರಲ್ಲಿರುವುದನ್ನು ಕುಡಿಯಿರಿ.</verse>
				<verse number="28">ಇದು ಬಹುಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.</verse>
				<verse number="29">ನಾನು ನಿಮಗೆ ಹೇಳುವುದೇನೆಂದರೆ, ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲ,” ಎಂದರು.</verse>
				<verse number="30">ಬಳಿಕ ಅವರೆಲ್ಲರು ಒಂದು ಕೀರ್ತನೆ ಹಾಡಿ ಓಲಿವ್ ಗುಡ್ಡಕ್ಕೆ ಹೊರಟು ಹೋದರು.</verse>
				<verse number="31">ಆಗ ಯೇಸು ಅವರಿಗೆ, “ನೀವೆಲ್ಲರೂ ಈ ರಾತ್ರಿ ನನ್ನನ್ನು ಬಿಟ್ಟು ಓಡಿಹೋಗುವಿರಿ. ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ಏಕೆಂದರೆ ನಾನು ಕುರುಬನನ್ನು ಹೊಡೆಯುವೆನು, ಮಂದೆಯ ಕುರಿಗಳು ಚದರಿಹೋಗುವುವು,’</verse>
				<verse number="32">ಆದರೆ ನಾನು ಎದ್ದ ಮೇಲೆ, ನಿಮಗಿಂತ ಮುಂದಾಗಿ ಗಲಿಲಾಯಕ್ಕೆ ಹೋಗುವೆನು,” ಎಂದು ಹೇಳಿದರು.</verse>
				<verse number="33">ಆಗ ಪೇತ್ರನು ಯೇಸುವಿಗೆ, “ಎಲ್ಲರೂ ನಿಮ್ಮನ್ನು ಬಿಟ್ಟು ಹೋದರೂ ನಾನು ನಿಮ್ಮನ್ನು ಬಿಟ್ಟು ಹೋಗುವುದಿಲ್ಲ,” ಎಂದನು.</verse>
				<verse number="34">ಯೇಸು ಅವನಿಗೆ, “ಈ ರಾತ್ರಿಯಲ್ಲಿ ಹುಂಜ ಕೂಗುವುದಕ್ಕಿಂತ ಮುಂಚೆ, ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ ಎಂದು ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.</verse>
				<verse number="35">ಅದಕ್ಕೆ ಪೇತ್ರನು ಯೇಸುವಿಗೆ, “ನಾನು ನಿಮ್ಮೊಂದಿಗೆ ಸಾಯಬೇಕಾದರೂ ನಿಮ್ಮನ್ನು ನಿರಾಕರಿಸುವುದೇ ಇಲ್ಲ,” ಎಂದನು. ಅದರಂತೆಯೇ ಉಳಿದ ಶಿಷ್ಯರೆಲ್ಲರೂ ಹೇಳಿದರು.</verse>
				<verse number="36">ತರುವಾಯ ಯೇಸು ತಮ್ಮ ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ, “ನಾನು ಅಲ್ಲಿಗೆ ಹೋಗಿ ಪ್ರಾರ್ಥಿಸುವವರೆಗೆ ನೀವು ಇಲ್ಲೇ ಕುಳಿತುಕೊಳ್ಳಿರಿ,” ಎಂದರು.</verse>
				<verse number="37">ಯೇಸು ತಮ್ಮ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಪುತ್ರರನ್ನೂ ಕರೆದುಕೊಂಡು ಹೋಗಿ, ದುಃಖಿಸುವುದಕ್ಕೂ ಬಹು ವ್ಯಥೆಪಡುವುದಕ್ಕೂ ಆರಂಭಿಸಿದರು.</verse>
				<verse number="38">ಯೇಸು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ತೀವ್ರವಾದ ದುಃಖಕ್ಕೆ ಒಳಗಾಗಿದೆ. ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರಿ,” ಎಂದರು.</verse>
				<verse number="39">ಆಮೇಲೆ ಯೇಸು ಸ್ವಲ್ಪ ಮುಂದಕ್ಕೆ ಹೋಗಿ, ಬೋರಲು ಬಿದ್ದು ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ. ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ,” ಎಂದರು.</verse>
				<verse number="40">ತರುವಾಯ ಯೇಸು ಬಂದು, ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಏನು, ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ?</verse>
				<verse number="41">ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ, ಆದರೆ ಶರೀರವು ಬಲಹೀನವಾಗಿದೆ,” ಎಂದು ಹೇಳಿದರು.</verse>
				<verse number="42">ಯೇಸು ಎರಡನೆಯ ಸಾರಿ ಹೋಗಿ, ಪ್ರಾರ್ಥಿಸುತ್ತಾ, “ನನ್ನ ತಂದೆಯೇ ನಾನು ಕುಡಿಯದ ಹೊರತು ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ, ನಿನ್ನ ಚಿತ್ತವೇ ಆಗಲಿ,” ಎಂದರು.</verse>
				<verse number="43">ಯೇಸು ಹಿಂತಿರುಗಿದಾಗ, ಅವರು ತಿರುಗಿ ನಿದ್ರೆ ಮಾಡುವುದನ್ನು ಕಂಡರು. ಅವರ ಕಣ್ಣುಗಳು ಭಾರವಾಗಿದ್ದವು.</verse>
				<verse number="44">ಯೇಸು ಅವರನ್ನು ಬಿಟ್ಟು ಹೊರಟುಹೋಗಿ ಮೂರನೆಯ ಸಾರಿ ಅದೇ ಮಾತುಗಳನ್ನು ಪುನಃ ಹೇಳಿ ಪ್ರಾರ್ಥಿಸಿದರು.</verse>
				<verse number="45">ತರುವಾಯ ಯೇಸು ತಮ್ಮ ಶಿಷ್ಯರ ಬಳಿಗೆ ಬಂದು ಅವರಿಗೆ, “ಇನ್ನೂ ವಿಶ್ರಮಿಸುತ್ತಿದ್ದೀರಾ? ಇಗೋ, ಮನುಷ್ಯಪುತ್ರನಾದ ನಾನು ಪಾಪಿಗಳ ಕೈವಶವಾಗುವ ಸಮಯವು ಸಮೀಪಿಸಿದೆ.</verse>
				<verse number="46">ಏಳಿರಿ ಹೋಗೋಣ. ಇಗೋ, ನನಗೆ ದ್ರೋಹಬಗೆಯುವವನು ಸಮೀಪದಲ್ಲಿ ಇದ್ದಾನೆ,” ಎಂದು ಹೇಳಿದರು.</verse>
				<verse number="47">ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಖಡ್ಗ ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗಿತ್ತು.</verse>
				<verse number="48">ಯೇಸುವಿಗೆ ದ್ರೋಹಮಾಡುವುದಕ್ಕಿದ್ದವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಆತನೇ ಯೇಸು; ಆತನನ್ನು ಹಿಡಿಯಿರಿ,” ಎಂದು ಗುರುತು ಹೇಳಿಕೊಟ್ಟಿದ್ದನು.</verse>
				<verse number="49">ಯೂದನು ಬಂದ ಕೂಡಲೇ ನೇರವಾಗಿ ಯೇಸುವಿನ ಕಡೆಗೆ ಹೋಗಿ, “ಗುರುವೇ, ನಮಸ್ಕಾರ,” ಎಂದು ಹೇಳಿ ಅವರಿಗೆ ಮುದ್ದಿಟ್ಟನು.</verse>
				<verse number="50">ಅದಕ್ಕೆ ಯೇಸು ಅವನಿಗೆ, “ಸ್ನೇಹಿತನೇ, ನೀನು ಮಾಡಲು ಬಂದ ಕೆಲಸವನ್ನು ಮುಗಿಸು,” ಎಂದು ಹೇಳಿದರು. ಕೂಡಲೇ ಆ ಜನರು ಮುಂದೆ ಬಂದು, ಯೇಸುವನ್ನು ಹಿಡಿದು ಬಂಧಿಸಿದರು.</verse>
				<verse number="51">ಆಗ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಖಡ್ಗವನ್ನು ಹಿರಿದು, ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.</verse>
				<verse number="52">ಆಗ ಯೇಸು ಅವನಿಗೆ, “ನಿನ್ನ ಖಡ್ಗವನ್ನು ತಿರುಗಿ ಅದರ ಒರೆಯಲ್ಲಿ ಹಾಕು. ಖಡ್ಗವನ್ನು ಹಿಡಿದವರೆಲ್ಲರೂ ಖಡ್ಗದಿಂದ ನಾಶವಾಗುವರು.</verse>
				<verse number="53">ನಾನು ಈಗ ನನ್ನ ತಂದೆಗೆ ಕೇಳಿಕೊಂಡರೆ ಅವರು ಈಗಲೇ ಹನ್ನೆರಡು ದಳಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡಲಾರರೆಂದು ನೀನು ನೆನಸುತ್ತೀಯಾ?</verse>
				<verse number="54">ಹಾಗಾದರೆ ಇವುಗಳು ಹೀಗೆಯೇ ಆಗಬೇಕೆಂಬ ಪವಿತ್ರ ವೇದದ ವಾಕ್ಯಗಳು ನೆರವೇರುವುದು ಹೇಗೆ?” ಎಂದರು.</verse>
				<verse number="55">ಅದೇ ಗಳಿಗೆಯಲ್ಲಿ ಯೇಸು ಜನಸಮೂಹಕ್ಕೆ, “ಒಬ್ಬ ಕಳ್ಳನನ್ನು ಹಿಡಿಯುವುದಕ್ಕೆ ಬರುವಂತೆ ಖಡ್ಗಗಳೊಂದಿಗೆ ದೊಣ್ಣೆಗಳೊಂದಿಗೆ ನನ್ನನ್ನು ಹಿಡಿಯುವುದಕ್ಕಾಗಿ ಬಂದಿರಾ? ನಾನು ದಿನಾಲು ನಿಮ್ಮ ಸಂಗಡ ದೇವಾಲಯದಲ್ಲಿ ಕುಳಿತುಕೊಂಡು ಬೋಧಿಸುತ್ತಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ.</verse>
				<verse number="56">ಆದರೆ ಪವಿತ್ರ ವೇದದ ಪ್ರವಾದನೆಗಳು ನೆರವೇರುವಂತೆ ಇದೆಲ್ಲಾ ಆಯಿತು,” ಎಂದು ಹೇಳಿದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು.</verse>
				<verse number="57">ಯೇಸುವನ್ನು ಹಿಡಿದಿದ್ದವರು ಅವರನ್ನು ಮಹಾಯಾಜಕನಾದ ಕಾಯಫನ ಬಳಿಗೆ ತೆಗೆದುಕೊಂಡು ಹೋದರು. ಅಲ್ಲಿ ನಿಯಮ ಬೋಧಕರೂ ಹಿರಿಯರೂ ಕೂಡಿ ಬಂದಿದ್ದರು.</verse>
				<verse number="58">ಆದರೆ ಪೇತ್ರನು ಮಹಾಯಾಜಕನ ಅರಮನೆಗೆ ದೂರದಿಂದಲೇ ಯೇಸುವನ್ನು ಹಿಂಬಾಲಿಸಿ, ಒಳಗೆ ಹೋಗಿ ಅಂತ್ಯವೇನಾಗುವುದೆಂದು ನೋಡಲು ಸೇವಕರೊಂದಿಗೆ ಕುಳಿತುಕೊಂಡನು.</verse>
				<verse number="59">ಆಗ ಮುಖ್ಯಯಾಜಕರೂ ಆಲೋಚನಾ ಸಭೆಯವರೆಲ್ಲರೂ ಯೇಸುವಿಗೆ ವಿರೋಧವಾಗಿ ಯೇಸುವನ್ನು ಕೊಲ್ಲಿಸಬೇಕೆಂದು ಸುಳ್ಳುಸಾಕ್ಷಿಗಾಗಿ ಹುಡುಕಿದರು.</verse>
				<verse number="60">ಬಹುಮಂದಿ ಸುಳ್ಳುಸಾಕ್ಷಿಗಳು ಬಂದರೂ ಅವರಿಗೆ ಸರಿಯಾದ ಸಾಕ್ಷ್ಯವು ದೊರೆಯಲಿಲ್ಲ. ಕಡೆಯಲ್ಲಿ ಇಬ್ಬರು ಸುಳ್ಳುಸಾಕ್ಷಿಗಳು ಬಂದು,</verse>
				<verse number="61">“ನಾನು ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟಬಲ್ಲೆನೆಂದು ಈತನು ಹೇಳಿದನು,” ಎಂದರು.</verse>
				<verse number="62">ಮಹಾಯಾಜಕನು ಎದ್ದು ಯೇಸುವಿಗೆ, “ನೀನು ಏನೂ ಉತ್ತರ ಕೊಡುವುದಿಲ್ಲವೋ? ಇವರು ನಿನಗೆ ವಿರೋಧವಾಗಿ ಸಾಕ್ಷಿ ಹೇಳುವುದು ಏನು?” ಎಂದು ಕೇಳಿದನು.</verse>
				<verse number="63">ಆದರೆ ಯೇಸು ಸುಮ್ಮನಿದ್ದರು. ಆಗ ಮಹಾಯಾಜಕನು ಉತ್ತರವಾಗಿ ಯೇಸುವಿಗೆ, “ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ನಮಗೆ ಇದನ್ನು ಹೇಳು: ನೀನು ದೇವಪುತ್ರನಾದ ಕ್ರಿಸ್ತನೋ?” ಎಂದನು.</verse>
				<verse number="64">ಅದಕ್ಕೆ ಯೇಸು ಅವನಿಗೆ, “ನೀನೇ ಹೇಳಿದ್ದೀ; ಆದರೂ ಇನ್ನು ಮೇಲೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಕುಳಿತಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ನೀವು ಕಾಣುವಿರಿ ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.</verse>
				<verse number="65">ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಈತನು ದೇವದೂಷಣೆ ಮಾಡಿದ್ದಾನೆ. ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಏತಕ್ಕೆ? ನೋಡಿ, ಈಗ ಈತನ ದೇವದೂಷಣೆಯನ್ನು ನೀವೇ ಕೇಳಿದ್ದೀರಲ್ಲಾ</verse>
				<verse number="66">ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಿದ್ದಕ್ಕೆ ಅವರು ಉತ್ತರವಾಗಿ, “ಈತನು ಮರಣಕ್ಕೆ ಪಾತ್ರನು,” ಎಂದರು.</verse>
				<verse number="67">ಆಮೇಲೆ ಅವರು ಯೇಸುವಿನ ಮುಖದ ಮೇಲೆ ಉಗುಳಿ ಅವರನ್ನು ಗುದ್ದಿದರು. ಬೇರೆ ಕೆಲವರು ಅವರ ಕೆನ್ನೆಗೆ ಹೊಡೆದು,</verse>
				<verse number="68">“ಕ್ರಿಸ್ತನೇ, ನಿನ್ನನ್ನು ಹೊಡೆದವರು ಯಾರು? ನಮಗೆ ಪ್ರವಾದನೆ ಹೇಳು,” ಎಂದರು.</verse>
				<verse number="69">ಆಗ ಪೇತ್ರನು ಹೊರಾಂಗಣದಲ್ಲಿ ಕುಳಿತಿರಲು, ಒಬ್ಬ ದಾಸಿಯು ಅವನ ಬಳಿಗೆ ಬಂದು, “ನೀನೂ ಗಲಿಲಾಯದ ಯೇಸುವಿನೊಂದಿಗೆ ಇದ್ದವನು,” ಎಂದಳು.</verse>
				<verse number="70">ಆದರೆ ಅವನು ಎಲ್ಲರ ಮುಂದೆ, “ನೀನು ಏನು ಹೇಳುತ್ತೀಯೋ ನನಗೆ ತಿಳಿಯದು,” ಎಂದು ನಿರಾಕರಿಸಿದನು.</verse>
				<verse number="71">ಅವನು ಮುಖ್ಯ ದ್ವಾರದೊಳಗೆ ಹೋದಾಗ, ಮತ್ತೊಬ್ಬ ಹುಡುಗಿಯು ಅವನನ್ನು ನೋಡಿ ಅಲ್ಲಿದ್ದವರಿಗೆ, “ಇವನು ಸಹ ನಜರೇತಿನ ಯೇಸುವಿನೊಂದಿಗೆ ಇದ್ದವನು,” ಎಂದಳು.</verse>
				<verse number="72">ಆಗ ಅವನು ಆಣೆ ಮಾಡಿ, “ನಾನು ಆ ಮನುಷ್ಯನನ್ನು ಅರಿಯೆನು,” ಎಂದು ತಿರುಗಿ ನಿರಾಕರಿಸಿದನು.</verse>
				<verse number="73">ಸ್ವಲ್ಪ ಸಮಯವಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನಿಗೆ, “ನಿಶ್ಚಯವಾಗಿಯೂ ನೀನು ಸಹ ಅವರಲ್ಲಿ ಒಬ್ಬನು. ನಿಜವಾಗಿಯೂ ನಿನ್ನ ಭಾಷೆಯು ನಿನ್ನನ್ನು ತೋರಿಸಿಕೊಡುತ್ತದೆ,” ಎಂದರು.</verse>
				<verse number="74">ಅದಕ್ಕೆ ಅವನು, “ಆ ಮನುಷ್ಯನನ್ನು ನಾನು ಅರಿಯೆನು,” ಎಂದು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಪ್ರಾರಂಭಿಸಿದನು. ಕೂಡಲೇ ಹುಂಜ ಕೂಗಿತು.</verse>
				<verse number="75">ಆಗ ಪೇತ್ರನು, “ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ,” ಎಂದು ಯೇಸು ತನಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.</verse>
			</chapter>
			<chapter number="27">
				<verse number="1">ಬೆಳಗಾದಾಗ, ಎಲ್ಲಾ ಮುಖ್ಯಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವುದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು.</verse>
				<verse number="2">ಅವರು ಯೇಸುವನ್ನು ಕಟ್ಟಿ, ಕರೆದುಕೊಂಡು ಹೋಗಿ ರಾಜ್ಯಪಾಲ ಪಿಲಾತನಿಗೆ ಒಪ್ಪಿಸಿದರು.</verse>
				<verse number="3">ಯೇಸುವಿಗೆ ದ್ರೋಹಮಾಡಿದ ಯೂದನು ಗುರುವಿಗೆ ಮರಣ ದಂಡನೆಯ ತೀರ್ಪಾದದ್ದನ್ನು ಕಂಡು ವಿಷಾದಿಸಿ, ಆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಮುಖ್ಯಯಾಜಕರ ಮತ್ತು ಹಿರಿಯರ ಬಳಿಗೆ ಮರಳಿ ತಂದನು.</verse>
				<verse number="4">ಅವನು, “ನಾನು ನಿರಪರಾಧಿಯ ರಕ್ತಕ್ಕೆ ದ್ರೋಹ ಬಗೆದು ಪಾಪಮಾಡಿದ್ದೇನೆ,” ಎಂದನು. ಅದಕ್ಕೆ ಅವರು, “ನಮಗೇನು? ನೀನೇ ಅದನ್ನು ನೋಡಿಕೋ,” ಎಂದರು.</verse>
				<verse number="5">ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ನೇಣು ಹಾಕಿಕೊಂಡನು.</verse>
				<verse number="6">ಆಗ ಮುಖ್ಯಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು, “ಇವುಗಳನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕುವುದು ನ್ಯಾಯವಲ್ಲ. ಅದು ರಕ್ತದ ಕ್ರಯವಾಗಿದೆ,” ಎಂದರು.</verse>
				<verse number="7">ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಳಿಡುವುದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು.</verse>
				<verse number="8">ಈ ಕಾರಣದಿಂದ ಆ ಹೊಲವನ್ನು “ರಕ್ತದ ಹೊಲ” ಎಂದು ಈ ದಿನದವರೆಗೆ ಕರೆಯಲಾಗುತ್ತಿದೆ.</verse>
				<verse number="9">ಹೀಗೆ ಪ್ರವಾದಿ ಯೆರೆಮೀಯನು ಹೇಳಿದ ಮಾತು ನೆರವೇರಿತು. ಅದೇನೆಂದರೆ, “ಇಸ್ರಾಯೇಲಿನ ಮಕ್ಕಳಲ್ಲಿ ಅವರು ಬೆಲೆ ಕಟ್ಟಿದವನ ಬೆಲೆಯಾದ ಮೂವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡು,</verse>
				<verse number="10">ಕರ್ತನು ನನಗೆ ಆಜ್ಞಾಪಿಸಿದಂತೆ ಅವುಗಳನ್ನು, ‘ಕುಂಬಾರನ ಹೊಲ’ ಕೊಳ್ಳಲು ಕೊಟ್ಟರು,” ಎಂಬುದು.</verse>
				<verse number="11">ಯೇಸು ರಾಜ್ಯಪಾಲನ ಮುಂದೆ ನಿಂತಿದ್ದರು. ಆಗ ಅವನು ಯೇಸುವಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ, “ನೀನೇ ಹೇಳುತ್ತಿದ್ದಿ,” ಎಂದರು.</verse>
				<verse number="12">ಆಗ ಮುಖ್ಯಯಾಜಕರೂ ಹಿರಿಯರೂ ಯೇಸುವಿನ ಮೇಲೆ ದೂರು ಹೇಳುತ್ತಿದ್ದರೂ ಅವರು ಏನೂ ಉತ್ತರ ಕೊಡಲಿಲ್ಲ.</verse>
				<verse number="13">ಆಗ ಪಿಲಾತನು ಯೇಸುವಿಗೆ, “ನಿನಗೆ ವಿರೋಧವಾಗಿ ಇವರು ಇಷ್ಟು ದೂರು ಹೇಳುತ್ತಿರುವುದು ನಿನಗೆ ಕೇಳಿಸುವುದಿಲ್ಲವೋ?” ಎಂದನು.</verse>
				<verse number="14">ಒಂದು ಮಾತಿಗಾದರೂ ಯೇಸು ಅವನಿಗೆ ಉತ್ತರ ಕೊಡದೆ ಇದ್ದುದರಿಂದ ರಾಜ್ಯಪಾಲನು ಅತ್ಯಾಶ್ಚರ್ಯಪಟ್ಟನು.</verse>
				<verse number="15">ಆ ಹಬ್ಬದಲ್ಲಿ ಜನರು ಇಷ್ಟಪಡುವ ಒಬ್ಬ ಸೆರೆಯಾಳನ್ನು ರಾಜ್ಯಪಾಲನು ಬಿಟ್ಟುಕೊಡುವ ಪದ್ಧತಿಯಿತ್ತು.</verse>
				<verse number="16">ಆ ಸಮಯದಲ್ಲಿ ಬರಬ್ಬನೆಂಬ ಪ್ರಸಿದ್ಧ ಸೆರೆಯಾಳು ಅವರಲ್ಲಿ ಇದ್ದನು.</verse>
				<verse number="17">ಜನಸಮೂಹ ಕೂಡಿಬಂದಿದ್ದಾಗ ಪಿಲಾತನು ಅವರಿಗೆ, “ನಿಮಗೆ ಯಾರನ್ನು ಬಿಡುಗಡೆ ಮಾಡಬೇಕೆನ್ನುತ್ತೀರಿ? ಬರಬ್ಬನನ್ನೋ? ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನೋ?” ಎಂದು ಕೇಳಿದನು.</verse>
				<verse number="18">ಯೇಸುವನ್ನು ಅವರು ಹೊಟ್ಟೆಕಿಚ್ಚಿನಿಂದ ಒಪ್ಪಿಸಿಕೊಟ್ಟಿದ್ದರೆಂದು ಪಿಲಾತನಿಗೆ ತಿಳಿದಿತ್ತು.</verse>
				<verse number="19">ಪಿಲಾತನು ನ್ಯಾಯಾಸನದ ಮೇಲೆ ಕೂತಿದ್ದಾಗ, ಅವನ ಹೆಂಡತಿಯು ಅವನಿಗೆ, “ನೀನು ಆ ನೀತಿವಂತನ ಗೊಡವೆಗೆ ಹೋಗಬೇಡ. ಈ ದಿವಸ ನಾನು ಸ್ವಪ್ನದಲ್ಲಿ ಆತನ ವಿಷಯವಾಗಿ ಬಹಳ ಕಷ್ಟಪಟ್ಟಿದ್ದೇನೆ,” ಎಂದು ಹೇಳಿ ಕಳುಹಿಸಿದಳು.</verse>
				<verse number="20">ಆದರೆ ಮುಖ್ಯಯಾಜಕರು ಮತ್ತು ಹಿರಿಯರು ಬರಬ್ಬನನ್ನು ಬಿಟ್ಟುಕೊಟ್ಟು ಯೇಸುವನ್ನು ಕೊಲ್ಲುವಂತೆ ಬೇಡಿಕೊಳ್ಳುವ ಹಾಗೆ ಸಮೂಹವನ್ನು ಒಡಂಬಡಿಸಿದರು.</verse>
				<verse number="21">ರಾಜ್ಯಪಾಲನು ಅವರಿಗೆ, “ಈ ಇಬ್ಬರಲ್ಲಿ ನಿಮಗೆ ಯಾರನ್ನು ಬಿಟ್ಟು ಕೊಡಬೇಕೆನ್ನುತ್ತೀರಿ?” ಎಂದು ಕೇಳಲು ಅವರು, “ಬರಬ್ಬನನ್ನು,” ಎಂದರು.</verse>
				<verse number="22">ಪಿಲಾತನು ಅವರಿಗೆ, “ಹಾಗಾದರೆ ಕ್ರಿಸ್ತನೆನ್ನಿಸಿಕೊಳ್ಳುವ ಯೇಸುವನ್ನು ನಾನೇನು ಮಾಡಲಿ?” ಎಂದು ಕೇಳಲು ಅವರೆಲ್ಲರೂ, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಹೇಳಿದರು.</verse>
				<verse number="23">ಆಗ ಪಿಲಾತನು ಅವರಿಗೆ, “ಏಕೆ? ಆತನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಲು ಅವರು, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.</verse>
				<verse number="24">ಪಿಲಾತನು ತನ್ನ ಯತ್ನ ನಡೆಯಲಿಲ್ಲವೆಂದೂ ಅದಕ್ಕೆ ಬದಲಾಗಿ ಗದ್ದಲವೇ ಹೆಚ್ಚಾಗುತ್ತದೆಂದೂ ನೋಡಿ, ನೀರನ್ನು ತೆಗೆದುಕೊಂಡು ಸಮೂಹದ ಮುಂದೆ ತನ್ನ ಕೈಗಳನ್ನು ತೊಳೆದು, “ಈ ನೀತಿವಂತನ ರಕ್ತದ ವಿಷಯದಲ್ಲಿ ನಾನು ನಿರಪರಾಧಿ, ಇದಕ್ಕೆ ನೀವೇ ಜವಾಬ್ದಾರಿ,” ಎಂದನು.</verse>
				<verse number="25">ಅದಕ್ಕೆ ಜನರೆಲ್ಲರೂ ಉತ್ತರವಾಗಿ, “ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ,” ಎಂದರು.</verse>
				<verse number="26">ಆಗ ಪಿಲಾತನು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು, ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.</verse>
				<verse number="27">ತರುವಾಯ ರಾಜ್ಯಪಾಲನ ಸೈನಿಕರು ಯೇಸುವನ್ನು ರಾಜಭವನದೊಳಕ್ಕೆ ತೆಗೆದುಕೊಂಡುಹೋಗಿ ಸೈನ್ಯದ ಪೂರ್ಣತಂಡವನ್ನು ಯೇಸುವಿನ ಸುತ್ತಲೂ ಕೂಡಿಸಿದರು.</verse>
				<verse number="28">ಅವರು ಯೇಸುವಿನ ಬಟ್ಟೆಗಳನ್ನು ತೆಗೆದುಹಾಕಿ ಕಡುಗೆಂಪು ನಿಲುವಂಗಿಯನ್ನು ಅವರಿಗೆ ತೊಡಿಸಿದರು.</verse>
				<verse number="29">ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು, ಯೇಸುವಿನ ತಲೆಯ ಮೇಲಿಟ್ಟು, ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಅವರ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಮಸ್ಕಾರ!” ಎಂದು ಹೇಳಿ ಯೇಸುವನ್ನು ಹಾಸ್ಯಮಾಡಿದರು.</verse>
				<verse number="30">ಅವರು ಯೇಸುವಿನ ಮೇಲೆ ಉಗುಳಿ, ಆ ಬೆತ್ತವನ್ನು ತೆಗೆದುಕೊಂಡು ಅವರ ತಲೆಯ ಮೇಲೆ ಮತ್ತೆ ಮತ್ತೆ ಹೊಡೆದರು.</verse>
				<verse number="31">ಹೀಗೆ ಹಾಸ್ಯ ಮಾಡಿದ ಮೇಲೆ, ಆ ನಿಲುವಂಗಿಯನ್ನು ಯೇಸುವಿನಿಂದ ತೆಗೆದುಹಾಕಿ ಅವರ ವಸ್ತ್ರವನ್ನು ಹೊದಿಸಿ, ಯೇಸುವನ್ನು ಶಿಲುಬೆಗೆ ಹಾಕುವುದಕ್ಕಾಗಿ ನಡೆಸಿಕೊಂಡು ಹೋದರು.</verse>
				<verse number="32">ಅವರು ಹೊರಗೆ ಹೋಗುತ್ತಿರುವಾಗ, ಕುರೇನೆ ಗ್ರಾಮದ ಸೀಮೋನನೆಂಬ ಮನುಷ್ಯನನ್ನು ಕಂಡು, ಯೇಸುವಿನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.</verse>
				<verse number="33">ಆಮೇಲೆ ಅವರು “ಗೊಲ್ಗೊಥಾ” ಎಂದು ಕರೆಯಲಾಗುತ್ತಿದ್ದ ಸ್ಥಳಕ್ಕೆ ಬಂದರು. ಅದರ ಅರ್ಥ “ತಲೆಬುರುಡೆಯ ಸ್ಥಳ” ಎಂಬುದು.</verse>
				<verse number="34">ಆಗ ಅವರು ಯೇಸುವಿಗೆ ಕಹಿ ಬೆರೆಸಿದ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಯೇಸು ಅದನ್ನು ರುಚಿ ನೋಡಿ ಕುಡಿಯಲು ಇಷ್ಟಪಡಲಿಲ್ಲ.</verse>
				<verse number="35">ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ, ಅವರ ಬಟ್ಟೆಗಳಿಗಾಗಿ ಸೈನಿಕರು ಚೀಟುಹಾಕಿ ಹಂಚಿಕೊಂಡರು</verse>
				<verse number="36">ಮತ್ತು ಅವರು ಅಲ್ಲಿ ಕೆಳಗೆ ಕುಳಿತು ಕಾವಲು ಕಾಯುತ್ತಿದ್ದರು.</verse>
				<verse number="37">ಯೇಸುವಿನ ತಲೆಯ ಮೇಲ್ಭಾಗದಲ್ಲಿ ಅವರ ವಿರುದ್ಧ ದೋಷಾರೋಪಣೆಯನ್ನು ಬರೆದಿಟ್ಟರು. ಅದೇನೆಂದರೆ: ಈತನು ಯೆಹೂದ್ಯರ ಅರಸನಾದ ಯೇಸು.</verse>
				<verse number="38">ಯೇಸುವಿನೊಂದಿಗೆ ಇಬ್ಬರು ಕಳ್ಳರನ್ನು ತಂದು ಒಬ್ಬನನ್ನು ಬಲಗಡೆಯಲ್ಲಿ ಇನ್ನೊಬ್ಬನನ್ನು ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು.</verse>
				<verse number="39">ಅಲ್ಲಿ ಹಾದು ಹೋಗುತ್ತಿದ್ದವರು ಯೇಸುವನ್ನು ದೂಷಿಸಿ, ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ,</verse>
				<verse number="40">“ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ, ನಿನ್ನನ್ನು ನೀನೇ ರಕ್ಷಿಸಿಕೋ, ನೀನು ದೇವಪುತ್ರನಾಗಿದ್ದರೆ ಶಿಲುಬೆಯಿಂದ ಕೆಳಗೆ ಇಳಿದು ಬಾ,” ಎಂದರು.</verse>
				<verse number="41">ಅದೇ ಮೇರೆಗೆ ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ಯೇಸುವನ್ನು ಹಾಸ್ಯಮಾಡಿ,</verse>
				<verse number="42">“ಈತನು ಬೇರೆಯವರನ್ನು ರಕ್ಷಿಸಿದನು; ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು! ಈತನು ಇಸ್ರಾಯೇಲಿನ ಅರಸನಾಗಿದ್ದರೆ ಈಗಲೇ ಶಿಲುಬೆಯಿಂದ ಕೆಳಗೆ ಇಳಿದು ಬರಲಿ. ಆಗ ನಾವು ಈತನನ್ನು ನಂಬುವೆವು.</verse>
				<verse number="43">ಈತನು ದೇವರಲ್ಲಿ ಭರವಸೆ ಇಟ್ಟಿದ್ದಾನೆ. ದೇವರಿಗೆ ಈತನಲ್ಲಿ ಇಷ್ಟವಿದ್ದರೆ, ದೇವರೇ ಈತನನ್ನು ಈಗ ಬಿಡಿಸಲಿ, ಏಕೆಂದರೆ ಈತನು, ‘ನಾನು ದೇವಪುತ್ರನು’ ಎಂದು ಹೇಳಿದ್ದಾನೆ,” ಎಂದರು.</verse>
				<verse number="44">ಯೇಸುವಿನ ಜೊತೆಗೆ ಶಿಲುಬೆಗೇರಿಸಲಾಗಿದ್ದ ಕಳ್ಳರು ಸಹ ಅದೇ ರೀತಿಯಾಗಿ ಅವರನ್ನು ನಿಂದಿಸಿದರು.</verse>
				<verse number="45">ಆಗ ಮಧ್ಯಾಹ್ನದಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.</verse>
				<verse number="46">ಸುಮಾರು ಮೂರು ಗಂಟೆಗೆ ಯೇಸು, “ಏಲೀ, ಏಲೀ, ಲಮಾ ಸಬಕ್ತಾನೀ?” ಅಂದರೆ, “ನನ್ನ ದೇವರೇ, ನನ್ನ ದೇವರೇ ಏಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿ ಹೇಳಿದರು.</verse>
				<verse number="47">ಆಗ ಅಲ್ಲಿ ನಿಂತಿದ್ದವರಲ್ಲಿ ಕೆಲವರು, “ಈತನು ಎಲೀಯನನ್ನು ಕರೆಯುತ್ತಿದ್ದಾನೆ,” ಎಂದರು.</verse>
				<verse number="48">ಕೂಡಲೇ ಅವರಲ್ಲಿ ಒಬ್ಬನು ಓಡಿಹೋಗಿ ಹೀರುವ ವಸ್ತುವಿನಿಂದ ಹುಳಿರಸದಲ್ಲಿ ಅದ್ದಿ ಒಂದು ಕೋಲಿಗೆ ಸಿಕ್ಕಿಸಿ ಯೇಸುವಿಗೆ ಕುಡಿಯುವುದಕ್ಕೆ ಕೊಟ್ಟನು.</verse>
				<verse number="49">ಉಳಿದವರು, “ಇರಲಿ ಬಿಡು, ಎಲೀಯನು ಬಂದು ಈತನನ್ನು ರಕ್ಷಿಸುವನೇನೋ ನೋಡೋಣ,” ಎಂದರು.</verse>
				<verse number="50">ಯೇಸು ತಿರುಗಿ ಗಟ್ಟಿಯಾಗಿ ಕೂಗಿ, ತಮ್ಮ ಆತ್ಮವನ್ನು ಒಪ್ಪಿಸಿಕೊಟ್ಟರು.</verse>
				<verse number="51">ಅದೇ ಸಮಯದಲ್ಲಿ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು. ಭೂಮಿಯು ಕಂಪಿಸಿತು. ಬಂಡೆಗಳು ಸೀಳಿಹೋದವು.</verse>
				<verse number="52">ಇದಲ್ಲದೆ ಸಮಾಧಿಗಳು ತೆರೆದುಕೊಂಡವು. ಮರಣ ಹೊಂದಿದ ಅನೇಕ ಭಕ್ತರ ದೇಹಗಳು ಎದ್ದವು.</verse>
				<verse number="53">ಯೇಸು ಪುನರುತ್ಥಾನವಾದ ಮೇಲೆ ಅವರು ಸಮಾಧಿಗಳೊಳಗಿಂದ ಹೊರಗೆ ಬಂದು ಪವಿತ್ರ ಪಟ್ಟಣದೊಳಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.</verse>
				<verse number="54">ಆಗ ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ಸಂಭವಿಸಿದ್ದೆಲ್ಲವನ್ನೂ ಕಂಡು ಬಹಳವಾಗಿ ಭಯಪಟ್ಟು, “ನಿಜವಾಗಿಯೂ ಈತನು ದೇವಪುತ್ರನಾಗಿದ್ದನು,” ಎಂದರು.</verse>
				<verse number="55">ಯೇಸುವನ್ನು ಗಲಿಲಾಯದಿಂದ ಹಿಂಬಾಲಿಸಿ, ಅವರಿಗೆ ಸೇವೆಮಾಡಿದ ಅನೇಕ ಸ್ತ್ರೀಯರು ದೂರದಿಂದ ನೋಡುತ್ತಿದ್ದರು.</verse>
				<verse number="56">ಅವರಲ್ಲಿ ಮಗ್ದಲದ ಮರಿಯಳು, ಯಾಕೋಬ ಮತ್ತು ಯೋಸೆಯ ತಾಯಿ ಮರಿಯಳು ಹಾಗೂ ಜೆಬೆದಾಯನ ಮಕ್ಕಳ ತಾಯಿ ಇದ್ದರು.</verse>
				<verse number="57">ಸಂಜೆಯಾದಾಗ, ಅರಿಮಥಾಯ ಊರಿನ ಯೋಸೇಫನೆಂಬ ಹೆಸರುಳ್ಳ ಧನವಂತನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು.</verse>
				<verse number="58">ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ಕೇಳಿಕೊಂಡನು. ಆಗ ಪಿಲಾತನು ದೇಹವನ್ನು ಅವನಿಗೆ ಒಪ್ಪಿಸುವಂತೆ ಅಪ್ಪಣೆಕೊಟ್ಟನು.</verse>
				<verse number="59">ಯೋಸೇಫನು ಆ ದೇಹವನ್ನು ತೆಗೆದುಕೊಂಡ ಮೇಲೆ, ಅದನ್ನು ಶುದ್ಧವಾದ ನಾರುಮಡಿ ಬಟ್ಟೆಯಲ್ಲಿ ಸುತ್ತಿ,</verse>
				<verse number="60">ಬಂಡೆಯಲ್ಲಿ ತಾನು ಕೊರೆದಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು, ಆ ಸಮಾಧಿಯ ಬಾಗಿಲಿಗೆ ದೊಡ್ಡ ಬಂಡೆಯನ್ನು ಉರುಳಿಸಿ ಹೊರಟುಹೋದನು.</verse>
				<verse number="61">ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕುಳಿತುಕೊಂಡಿದ್ದರು.</verse>
				<verse number="62">ಮರುದಿನ, ಅಂದರೆ ಪಸ್ಕಹಬ್ಬದ ಸಿದ್ಧತೆಯ ದಿನ ಕಳೆದ ಮೇಲೆ ಮುಖ್ಯಯಾಜಕರು, ಫರಿಸಾಯರು ಒಟ್ಟಾಗಿ ಪಿಲಾತನ ಬಳಿಗೆ ಬಂದು,</verse>
				<verse number="63">“ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿರುವಾಗ, ‘ಮೂರು ದಿನಗಳಾದ ಮೇಲೆ ನಾನು ತಿರುಗಿ ಏಳುವೆನು,’ ಎಂದು ಹೇಳಿದ್ದು ನಮಗೆ ನೆನಪಿದೆ.</verse>
				<verse number="64">ಯೇಸುವಿನ ಶಿಷ್ಯರು ರಾತ್ರಿಯಲ್ಲಿ ಬಂದು ಆತನನ್ನು ಕದ್ದುಕೊಂಡು ಹೋಗಿ, ಯೇಸು ಸತ್ತವರೊಳಗಿಂದ ಎದ್ದಿದ್ದಾನೆ ಎಂದು ಜನರಿಗೆ ಹೇಳಿಯಾರು. ಆಗ ಮೊದಲನೆಯ ಮೋಸಕ್ಕಿಂತ ಕಡೆಯ ಮೋಸವು ಕೆಡುಕಾದೀತು. ಆದಕಾರಣ ಮೂರನೆಯ ದಿನದವರೆಗೆ ಸಮಾಧಿಯನ್ನು ಭದ್ರಪಡಿಸುವಂತೆ ಅಪ್ಪಣೆಕೊಡಬೇಕು,” ಎಂದರು.</verse>
				<verse number="65">ಪಿಲಾತನು ಅವರಿಗೆ, “ಕಾವಲುಗಾರರು ಇದ್ದಾರಲ್ಲಾ, ಹೋಗಿ ನಿಮಗೆ ತಿಳಿದಮಟ್ಟಿಗೆ ಅದನ್ನು ಭದ್ರಪಡಿಸಿರಿ,” ಎಂದನು.</verse>
				<verse number="66">ಅವರು ಹೋಗಿ ಸಮಾಧಿಯನ್ನು ಭದ್ರಪಡಿಸಿ ಕಲ್ಲಿಗೆ ಮುದ್ರೆಹಾಕಿ, ಕಾವಲನ್ನು ಇಟ್ಟರು.</verse>
			</chapter>
			<chapter number="28">
				<verse number="1">ಸಬ್ಬತ್ ಮುಗಿದ ಮೇಲೆ, ವಾರದ ಮೊದಲನೆಯ ದಿನ ಬೆಳಗಾಗುವಾಗ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.</verse>
				<verse number="2">ಆಗ ಮಹಾ ಭೂಕಂಪವಾಯಿತು. ಕರ್ತನ ದೂತನು ಪರಲೋಕದಿಂದ ಇಳಿದುಬಂದು, ಬಾಗಿಲಿನಿಂದ ಬಂಡೆಯನ್ನು ಉರುಳಿಸಿ ಅದರ ಮೇಲೆ ಕುಳಿತುಕೊಂಡನು.</verse>
				<verse number="3">ಅವನ ರೂಪವು ಮಿಂಚಿನಂತೆಯೂ ಅವನ ಉಡುಪು ಹಿಮದಂತೆಯೂ ಬಿಳುಪಾಗಿತ್ತು.</verse>
				<verse number="4">ಕಾವಲುಗಾರರು ಅವನಿಗೆ ಭಯಪಟ್ಟು ನಡುಗುತ್ತಾ ಸತ್ತಂತಾದರು.</verse>
				<verse number="5">ಆ ದೂತನು ಸ್ತ್ರೀಯರಿಗೆ, “ನೀವು ಭಯಪಡಬೇಡಿರಿ. ಶಿಲುಬೆಗೇರಿಸಿದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು.</verse>
				<verse number="6">ಅವರು ಇಲ್ಲಿ ಇಲ್ಲ. ಅವರು ಹೇಳಿದಂತೆಯೇ ಜೀವಂತರಾಗಿ ಎದ್ದಿದ್ದಾರೆ. ಕರ್ತನನ್ನು ಇಟ್ಟಿದ್ದ ಸ್ಥಳವನ್ನು ಬಂದು ನೋಡಿರಿ.</verse>
				<verse number="7">ಬೇಗನೆ ಹೋಗಿ ಅವರ ಶಿಷ್ಯರಿಗೆ, ‘ಅವರು ಮರಣದಿಂದ ಎದ್ದಿದ್ದಾರೆ. ಅವರು ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುತ್ತಾರೆ. ನೀವು ಅಲ್ಲಿಯೇ ಅವರನ್ನು ಕಾಣುವಿರಿ,’ ಎಂದು ತಿಳಿಸಿರಿ. ಇದೇ ನಾನು ನಿಮಗೆ ತಿಳಿಸಬೇಕಾದ ಸಂಗತಿ,” ಎಂದನು.</verse>
				<verse number="8">ಅವರು ಭಯದಿಂದಲೂ ಮಹಾ ಸಂತೋಷದಿಂದಲೂ ಸಮಾಧಿಯಿಂದ ಬೇಗನೆ ಹೊರಟು, ಶಿಷ್ಯರಿಗೆ ತಿಳಿಸುವುದಕ್ಕಾಗಿ ಓಡಿಹೋದರು.</verse>
				<verse number="9">ಅವರು ಶಿಷ್ಯರಿಗೆ ತಿಳಿಸುವುದಕ್ಕೆ ಹೋಗುತ್ತಿದ್ದಾಗ, ಯೇಸು ಅವರನ್ನು ಸಂಧಿಸಿ, “ಶುಭವಾಗಲಿ” ಎಂದರು. ಅವರು ಬಂದು ಯೇಸುವಿನ ಪಾದಗಳನ್ನು ಹಿಡಿದು ಅವರನ್ನು ಆರಾಧಿಸಿದರು.</verse>
				<verse number="10">ಆಗ ಯೇಸು ಅವರಿಗೆ, “ಭಯಪಡಬೇಡಿರಿ, ನನ್ನ ಸಹೋದರರು ಗಲಿಲಾಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವರೆಂದೂ ಹೋಗಿ ಅವರಿಗೆ ಹೇಳಿರಿ,” ಎಂದರು.</verse>
				<verse number="11">ಅವರು ಹೋಗುತ್ತಿರುವಾಗ, ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ಮುಖ್ಯಯಾಜಕರಿಗೆ ನಡೆದ ಸಂಗತಿಗಳನ್ನೆಲ್ಲಾ ಹೇಳಿದರು.</verse>
				<verse number="12">ಇವರು ಹಿರಿಯರೊಂದಿಗೆ ಕೂಡಿಬಂದು ಆಲೋಚನೆ ಮಾಡಿ ಸೈನಿಕರಿಗೆ ಬಹಳ ಹಣಕೊಟ್ಟು,</verse>
				<verse number="13">“ ‘ನಾವು ನಿದ್ರೆ ಮಾಡುತ್ತಿದ್ದಾಗ ಅವನ ಶಿಷ್ಯರು ರಾತ್ರಿಯಲ್ಲಿ ಬಂದು ಅವನನ್ನು ಕದ್ದುಕೊಂಡು ಹೋದರು,’ ಎಂದು ನೀವು ಹೇಳಿರಿ.</verse>
				<verse number="14">ಇದು ರಾಜ್ಯಪಾಲನ ಕಿವಿಗೆ ಬಿದ್ದರೆ, ನೀವು ತಪ್ಪಿಸಿಕೊಳ್ಳುವ ಹಾಗೆ ನಾವು ಅವನನ್ನು ಸಮಾಧಾನಪಡಿಸುವೆವು,” ಎಂದರು.</verse>
				<verse number="15">ಹೀಗೆ ಅವರು ಆ ಹಣವನ್ನು ತೆಗೆದುಕೊಂಡು ತಮಗೆ ಕಲಿಸಿದಂತೆ ವರದಿಮಾಡಿದರು. ಈ ಕಥೆಯು ಈ ದಿನದವರೆಗೂ ಯೆಹೂದ್ಯರಲ್ಲಿ ಹಬ್ಬಿದೆ.</verse>
				<verse number="16">ಆಗ ಹನ್ನೊಂದು ಮಂದಿ ಶಿಷ್ಯರು ಯೇಸು ತಮಗೆ ನೇಮಿಸಿದ ಗಲಿಲಾಯದಲ್ಲಿರುವ ಬೆಟ್ಟಕ್ಕೆ ಹೋದರು.</verse>
				<verse number="17">ಅವರು ಯೇಸುವನ್ನು ಕಂಡು ಆರಾಧಿಸಿದರು. ಆದರೆ ಕೆಲವರು ಸಂದೇಹ ಪಟ್ಟರು.</verse>
				<verse number="18">ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.</verse>
				<verse number="19">ಆದ್ದರಿಂದ ನೀವು ಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ. ಅವರಿಗೆ ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿ,</verse>
				<verse number="20">ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.</verse>
			</chapter>
		</book>
		<book number="41">
			<chapter number="1">
				<verse number="1">ದೇವಪುತ್ರರಾದ ಯೇಸುಕ್ರಿಸ್ತರ ಸುವಾರ್ತೆಯ ಆರಂಭ.</verse>
				<verse number="2">ಪ್ರವಾದಿ ಯೆಶಾಯನ ಗ್ರಂಥದಲ್ಲಿ: “ಇಗೋ, ನಿನ್ನ ಮುಂದೆ ನಾನು ನನ್ನ ದೂತನನ್ನು ಕಳುಹಿಸುತ್ತೇನೆ, ಅವನು ನಿನ್ನ ದಾರಿಯನ್ನು ಸಿದ್ಧಮಾಡುವನು.”</verse>
				<verse number="3">“ ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವವನ ಸ್ವರವದೆ.”</verse>
				<verse number="4">ಎಂದು ಬರೆದಿಟ್ಟ ಪ್ರಕಾರ, ಸ್ನಾನಿಕನಾದ ಯೋಹಾನನು ಅರಣ್ಯದಲ್ಲಿ ಪಾಪಗಳ ಪರಿಹಾರಕ್ಕಾಗಿ ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು, ಸಾರುತ್ತಾ ಬಂದನು.</verse>
				<verse number="5">ಯೂದಾಯ ಪ್ರಾಂತದ ಎಲ್ಲಾ ಹಳ್ಳಿಗಳಿಂದ ಮತ್ತು ಯೆರೂಸಲೇಮ್ ನಗರದಿಂದ ಎಲ್ಲಾ ಜನರು ಅವನ ಬಳಿಗೆ ಬರುತ್ತಿದ್ದರು. ಅವರು ತಮ್ಮ ಪಾಪಗಳನ್ನು ಅರಿಕೆಮಾಡುತ್ತಾ, ಅವನಿಂದ ಯೊರ್ದನ್ ನದಿಯಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.</verse>
				<verse number="6">ಯೋಹಾನನು ಒಂಟೆಯ ಕೂದಲಿನ ಉಡುಪನ್ನು ಧರಿಸಿ, ಸೊಂಟಕ್ಕೆ ಒಂದು ಚರ್ಮದ ನಡುಕಟ್ಟನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳು ಮತ್ತು ಕಾಡುಜೇನು ಅವನ ಆಹಾರವಾಗಿತ್ತು.</verse>
				<verse number="7">ಅವನು, “ನನಗಿಂತ ಶಕ್ತರೊಬ್ಬರು ನನ್ನ ನಂತರ ಬರುತ್ತಾರೆ, ಅವರ ಪಾದರಕ್ಷೆಗಳ ಪಟ್ಟಿಗಳನ್ನು ದಾಸನಂತೆ ಬಾಗಿ ಬಿಚ್ಚುವುದಕ್ಕೂ ನಾನು ಅರ್ಹನಲ್ಲ.</verse>
				<verse number="8">ನಾನು ನಿಮಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತೇನೆ, ಆದರೆ ಅವರು ನಿಮಗೆ ಪವಿತ್ರಾತ್ಮರಲ್ಲಿಯೇ ದೀಕ್ಷಾಸ್ನಾನ ಮಾಡಿಸುವರು,” ಎಂದು ಘೋಷಿಸುತ್ತಿದ್ದನು.</verse>
				<verse number="9">ಹೀಗಿರುವಲ್ಲಿ, ಒಂದು ದಿನ ಯೇಸು ಗಲಿಲಾಯ ಪ್ರಾಂತದ ನಜರೇತ್ ಎಂಬ ಪಟ್ಟಣದಿಂದ ಬಂದು, ಯೊರ್ದನ್ ನದಿಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡರು.</verse>
				<verse number="10">ಯೇಸು ನೀರಿನಿಂದ ಮೇಲಕ್ಕೆ ಬಂದ ಕೂಡಲೇ, ಆಕಾಶವು ತೆರೆದು, ಪವಿತ್ರಾತ್ಮರು ಪಾರಿವಾಳದಂತೆ ತಮ್ಮ ಮೇಲೆ ಇಳಿದು ಬರುವುದನ್ನು ಕಂಡರು.</verse>
				<verse number="11">ಆಗ, “ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ,” ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು.</verse>
				<verse number="12">ಕೂಡಲೇ ಪವಿತ್ರಾತ್ಮ ದೇವರು ಯೇಸುವನ್ನು ಅರಣ್ಯಕ್ಕೆ ನಡೆಸಿದರು.</verse>
				<verse number="13">ಯೇಸು ಅಲ್ಲಿ ನಲವತ್ತು ದಿನಗಳು, ಸೈತಾನನಿಂದ ಶೋಧನೆಗೆ ಒಳಗಾದರು. ಕಾಡುಮೃಗಗಳೊಡನೆ ಅರಣ್ಯದಲ್ಲಿ ಇದ್ದು, ದೇವದೂತರಿಂದ ಉಪಚಾರ ಪಡೆದರು.</verse>
				<verse number="14">ಯೋಹಾನನು ಬಂಧಿತನಾಗಿ ಸೆರೆಯಾದ ತರುವಾಯ, ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಸಾರಿದರು:</verse>
				<verse number="15">“ಕಾಲವು ಪರಿಪೂರ್ಣವಾಗಿದೆ, ದೇವರ ರಾಜ್ಯವು ಸಮೀಪಿಸಿದೆ, ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ,” ಎಂದು ಹೇಳಿದರು.</verse>
				<verse number="16">ಯೇಸು ಗಲಿಲಾಯ ಸರೋವರದ ತೀರದಲ್ಲಿ ನಡೆದುಹೋಗುತ್ತಿರುವಾಗ, ಸೀಮೋನನು ಮತ್ತು ಅವನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾಗಿದ್ದ ಅವರು ಸರೋವರದಲ್ಲಿ ಬಲೆ ಬೀಸುತ್ತಿದ್ದರು.</verse>
				<verse number="17">ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ. ನಾನು ನಿಮ್ಮನ್ನು, ಮನುಷ್ಯರನ್ನು ದೇವರ ಮಾರ್ಗದಲ್ಲಿ ನಡೆಸುವವರನ್ನಾಗಿ ಮಾಡುವೆನು,” ಎಂದು ಹೇಳಿದರು.</verse>
				<verse number="18">ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.</verse>
				<verse number="19">ಯೇಸು ಅಲ್ಲಿಂದ ಮುಂದೆ ಹೋಗುತ್ತಿದ್ದಾಗ, ಜೆಬೆದಾಯನ ಮಗ ಯಾಕೋಬ ಮತ್ತು ಅವನ ತಮ್ಮ ಯೋಹಾನನನ್ನು ಕಂಡರು. ಅವರು ತಮ್ಮ ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು.</verse>
				<verse number="20">ಕೂಡಲೇ ಯೇಸು ಅವರನ್ನು ಕರೆಯಲು, ಅವರು ತಮ್ಮ ತಂದೆ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.</verse>
				<verse number="21">ಅವರು ಕಪೆರ್ನೌಮಿಗೆ ಹೋದರು, ಕೂಡಲೇ ಸಬ್ಬತ್ ದಿನದಂದು ಯೇಸು ಸಭಾಮಂದಿರಕ್ಕೆ ಹೋಗಿ ಬೋಧಿಸತೊಡಗಿದರು.</verse>
				<verse number="22">ಯೇಸುವಿನ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು. ಏಕೆಂದರೆ ಯೇಸು ನಿಯಮ ಬೋಧಕರಂತೆ ಬೋಧಿಸದೆ, ಅಧಿಕಾರವಿದ್ದವರಂತೆ ಬೋಧಿಸುತ್ತಿದ್ದರು.</verse>
				<verse number="23">ಆ ಸಮಯದಲ್ಲಿ ಸಭಾಮಂದಿರದೊಳಗೆ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನಿದ್ದನು.</verse>
				<verse number="24">ಅವನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀವು ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರುವೆಯೋ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರಿಂದ ಬಂದ ಪರಿಶುದ್ಧರು,” ಎಂದು ಕೂಗಿ ಹೇಳಿದನು.</verse>
				<verse number="25">ಆಗ ಯೇಸು, “ಸುಮ್ಮನಿರು, ಅವನೊಳಗಿಂದ ಹೊರಗೆ ಬಾ,” ಎಂದು ಗದರಿಸಿದರು.</verse>
				<verse number="26">ಅಶುದ್ಧಾತ್ಮವು ಅವನನ್ನು ಉಗ್ರವಾಗಿ ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂತು.</verse>
				<verse number="27">ಜನರೆಲ್ಲರು ಇದನ್ನು ಕಂಡು ವಿಸ್ಮಯಗೊಂಡು, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ಅಶುದ್ಧಾತ್ಮಗಳಿಗೆ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.</verse>
				<verse number="28">ಕೂಡಲೇ ಯೇಸುವಿನ ಸುದ್ದಿಯು ಗಲಿಲಾಯದ ಸುತ್ತಮುತ್ತಲಿನ ಪ್ರಾಂತದಲ್ಲೆಲ್ಲಾ ಹಬ್ಬಿತು.</verse>
				<verse number="29">ಅವರು ಸಭಾಮಂದಿರವನ್ನು ಬಿಟ್ಟ ಕೂಡಲೇ, ಯಾಕೋಬ ಯೋಹಾನರೊಡನೆ ಸೀಮೋನ ಅಂದ್ರೆಯರ ಮನೆಗೆ ಹೋದರು.</verse>
				<verse number="30">ಅಲ್ಲಿ ಸೀಮೋನನ ಅತ್ತೆಯು ಜ್ವರದಿಂದ ಮಲಗಿದ್ದಳು. ಕೂಡಲೇ ಅವರು ಆಕೆಯ ವಿಷಯವಾಗಿ ಯೇಸುವಿಗೆ ತಿಳಿಸಿದರು.</verse>
				<verse number="31">ಯೇಸು ಆಕೆಯ ಬಳಿಗೆ ಬಂದು, ಕೈಹಿಡಿದು ಎಬ್ಬಿಸಿದರು. ಜ್ವರವು ಆಕೆಯನ್ನು ಬಿಟ್ಟುಹೋಯಿತು ಮತ್ತು ಆಕೆಯು ಅವರಿಗೆ ಉಪಚರಿಸಿದಳು.</verse>
				<verse number="32">ಆ ಸಂಜೆ ಸೂರ್ಯಾಸ್ತವಾದ ಮೇಲೆ ಜನರು ಅಸ್ವಸ್ಥರಾದವರನ್ನು ಮತ್ತು ದೆವ್ವಪೀಡಿತರನ್ನು ಯೇಸುವಿನ ಬಳಿಗೆ ಕರೆತಂದರು.</verse>
				<verse number="33">ಇಡೀ ಊರಿನವರು ಕೂಡಿ ಆ ಮನೆಯ ಬಾಗಿಲಿನ ಬಳಿ ಬಂದರು.</verse>
				<verse number="34">ಯೇಸು ವಿವಿಧ ರೋಗಗಳಿಗೆ ಒಳಗಾದ ಅನೇಕರನ್ನು ಸ್ವಸ್ಥಪಡಿಸಿ, ಅನೇಕ ದೆವ್ವಗಳನ್ನು ಓಡಿಸಿದರು. ಆದರೆ ತಾನು ಯಾರೆಂದು ಆ ದೆವ್ವಗಳಿಗೆ ತಿಳಿದಿದ್ದರಿಂದ ಯೇಸು ಅವುಗಳಿಗೆ ಮಾತನಾಡಲು ಅನುಮತಿಸಲಿಲ್ಲ.</verse>
				<verse number="35">ಬೆಳಗಾಗುವ ಮೊದಲೇ, ಇನ್ನೂ ಕತ್ತಲಿರುವಾಗ, ಯೇಸು ಎದ್ದು ಏಕಾಂತ ಸ್ಥಳಕ್ಕೆ ಹೊರಟುಹೋಗಿ, ಅಲ್ಲಿ ಪ್ರಾರ್ಥನೆ ಮಾಡುತ್ತಿದ್ದರು.</verse>
				<verse number="36">ಆಗ ಸೀಮೋನನು ಮತ್ತು ಅವನ ಸಂಗಡಿಗರು ಯೇಸುವನ್ನು ಹುಡುಕಿಕೊಂಡು ಹೋದರು.</verse>
				<verse number="37">ಯೇಸುವನ್ನು ಕಂಡ ಮೇಲೆ, “ಎಲ್ಲರೂ ನಿಮ್ಮನ್ನು ಎದುರು ನೋಡುತ್ತಿದ್ದಾರೆ,” ಎಂದು ಹೇಳಿದರು.</verse>
				<verse number="38">ಯೇಸು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ. ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು. ನಾನು ಬಂದಿರುವುದು ಇದಕ್ಕಾಗಿಯೇ,” ಎಂದು ಹೇಳಿದರು.</verse>
				<verse number="39">ಆದ್ದರಿಂದ ಯೇಸು ಗಲಿಲಾಯ ಪ್ರಾಂತವನ್ನೆಲ್ಲಾ ಸಂಚರಿಸಿ, ಅವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೆವ್ವಗಳನ್ನು ಓಡಿಸುತ್ತಾ ಇದ್ದರು.</verse>
				<verse number="40">ಕುಷ್ಠರೋಗಿಯಾಗಿದ್ದ ಒಬ್ಬನು ಯೇಸುವಿನ ಬಳಿಗೆ ಬಂದು, ಮೊಣಕಾಲೂರಿ, “ನಿಮಗೆ ಮನಸ್ಸಿದ್ದರೆ, ನೀವು ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದು ಅವರನ್ನು ಬೇಡಿಕೊಂಡನು.</verse>
				<verse number="41">ಯೇಸು ಕನಿಕರಪಟ್ಟು, ತಮ್ಮ ಕೈಚಾಚಿ ಅವನನ್ನು ಮುಟ್ಟಿ, “ನನಗೆ ಮನಸ್ಸಿದೆ, ನೀನು ಶುದ್ಧನಾಗು,” ಎಂದರು.</verse>
				<verse number="42">ತಕ್ಷಣವೇ ಕುಷ್ಠರೋಗವು ಹೋಗಿ ಅವನು ಶುದ್ಧನಾದನು.</verse>
				<verse number="43">ಯೇಸು ಅವನಿಗೆ, “ನೋಡು, ಇದನ್ನು ಯಾರಿಗೂ ಹೇಳಬೇಡ. ಆದರೆ ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿ, ಮೋಶೆಯು ಆಜ್ಞಾಪಿಸಿದ್ದನ್ನು ಶುದ್ಧತ್ವಕ್ಕಾಗಿ ಸಮರ್ಪಿಸು ಇದು ಅವರಿಗೆ ಸಾಕ್ಷಿಯಾಗಿರಲಿ,” ಎಂದು ಅವನಿಗೆ ಕಟ್ಟುನಿಟ್ಟಾಗಿ ಎಚ್ಚರಿಸಿ, ಕೂಡಲೇ ಅವನನ್ನು ಕಳುಹಿಸಿಬಿಟ್ಟರು.</verse>
				<verse number="44">ಆದರೆ ಅವನು ಹೋಗಿ ಈ ವಿಷಯವನ್ನು ಎಲ್ಲಾ ಕಡೆಗಳಲ್ಲಿ ಹಬ್ಬಿಸಿದನು. ಇದರ ಪರಿಣಾಮವಾಗಿ ಯೇಸು ಯಾವ ಊರೊಳಗೂ ಬಹಿರಂಗವಾಗಿ ಪ್ರವೇಶಿಸಲಾಗದೆ, ನಿರ್ಜನ ಪ್ರದೇಶಗಳಲ್ಲಿರುತ್ತಿದ್ದರು. ಆದರೂ ಜನರು ಎಲ್ಲಾ ಕಡೆಗಳಿಂದ ಯೇಸುವಿನ ಬಳಿಗೆ ಬರುತ್ತಿದ್ದರು.</verse>
			</chapter>
			<chapter number="2">
				<verse number="1">ಕೆಲವು ದಿನಗಳಾದ ಮೇಲೆ ಯೇಸು ಕಪೆರ್ನೌಮಿಗೆ ಹಿಂದಿರುಗಿದಾಗ, ಅವರು ಮನೆಗೆ ಬಂದಿದ್ದಾರೆಂಬ ವಾರ್ತೆಯು ಜನರಲ್ಲಿ ಹಬ್ಬಿತು.</verse>
				<verse number="2">ಜನರು ಗುಂಪಾಗಿ ಕೂಡಿಬಂದದ್ದರಿಂದ ಮನೆಯೊಳಗಾಗಲಿ ಬಾಗಿಲ ಬಳಿಯಲ್ಲಾಗಲಿ ಸ್ಥಳವಿರಲಿಲ್ಲ. ಯೇಸು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದರು.</verse>
				<verse number="3">ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ನಾಲ್ವರಿಂದ ಹೊರಿಸಿಕೊಂಡು ಅಲ್ಲಿಗೆ ಬಂದರು.</verse>
				<verse number="4">ಜನರ ಗುಂಪಿನ ನಿಮಿತ್ತ ಅವನನ್ನು ಯೇಸುವಿನ ಬಳಿಗೆ ತರಲು ಸಾಧ್ಯವಾಗದೆ ಹೋಯಿತು. ಆದ್ದರಿಂದ ಅವರು ಯೇಸು ಇದ್ದ ಕಡೆ ಮನೆಯ ಮೇಲ್ಚಾವಣಿಯನ್ನು ಒಡೆದು ತೆರೆದು, ಪಾರ್ಶ್ವವಾಯು ರೋಗಿಯನ್ನು ಮಲಗಿದ್ದ ಹಾಸಿಗೆಯ ಸಮೇತ ಕೆಳಗಿಳಿಸಿದರು.</verse>
				<verse number="5">ಯೇಸು ಅವರ ನಂಬಿಕೆಯನ್ನು ಕಂಡು, ಆ ಪಾರ್ಶ್ವವಾಯು ರೋಗಿಗೆ, “ಮಗನೇ, ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.</verse>
				<verse number="6">ಅಲ್ಲಿ ಕುಳಿತಿದ್ದ ಕೆಲವು ನಿಯಮ ಬೋಧಕರು,</verse>
				<verse number="7">“ಈತನು ಏಕೆ ಹೀಗೆ ಮಾತನಾಡುತ್ತಾನೆ? ಈತನು ದೇವದೂಷಣೆ ಮಾಡುತ್ತಿದ್ದಾನೆ! ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು?” ಎಂದು ತಮ್ಮೊಳಗೇ ಆಲೋಚಿಸಿಕೊಳ್ಳುತ್ತಿದ್ದರು.</verse>
				<verse number="8">ಯೇಸು ಅವರು ಯೋಚಿಸುತ್ತಿರುವುದನ್ನು ಕೂಡಲೇ ತಮ್ಮ ಆತ್ಮದಲ್ಲಿ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುವುದೇಕೆ?</verse>
				<verse number="9">ಯಾವುದು ಸುಲಭ? ಪಾರ್ಶ್ವವಾಯು ರೋಗಿಗೆ, ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ,’ ಎಂದು ಹೇಳುವುದೋ?</verse>
				<verse number="10">ಆದರೆ ಮನುಷ್ಯಪುತ್ರನಾದ ನನಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ ಆ ಪಾರ್ಶ್ವವಾಯು ರೋಗಿಗೆ,</verse>
				<verse number="11">“ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.</verse>
				<verse number="12">ಕೂಡಲೇ ಅವನು ಎದ್ದು, ತನ್ನ ಹಾಸಿಗೆಯನ್ನು ತೆಗೆದುಕೊಂಡು ಎಲ್ಲರ ಮುಂದೆ ಹೊರಟುಹೋದನು. ಆಗ ಎಲ್ಲರು ವಿಸ್ಮಯಗೊಂಡು, “ಇಂಥದ್ದನ್ನು ನಾವು ಹಿಂದೆಂದೂ ಕಂಡಿರಲಿಲ್ಲ!” ಎಂದು ಹೇಳುತ್ತಾ ದೇವರನ್ನು ಮಹಿಮೆಪಡಿಸಿದರು.</verse>
				<verse number="13">ಯೇಸು ಪುನಃ ಸರೋವರದ ತೀರಕ್ಕೆ ಹೋದರು. ಜನರೆಲ್ಲರೂ ಯೇಸುವಿನ ಬಳಿಗೆ ಬಂದರು. ಯೇಸು ಅವರಿಗೆ ಉಪದೇಶಿಸಿದರು.</verse>
				<verse number="14">ಯೇಸು ಅಲ್ಲಿಂದ ಹೋಗುತ್ತಿರುವಾಗ, ಸುಂಕದ ಕಟ್ಟೆಯಲ್ಲಿ ಕುಳಿತಿದ್ದ ಅಲ್ಫಾಯನ ಮಗ ಲೇವಿಯನ್ನು ಕಂಡು, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದಾಗ, ಅವನು ಎದ್ದು ಯೇಸುವನ್ನು ಹಿಂಬಾಲಿಸಿದನು.</verse>
				<verse number="15">ಯೇಸು ಲೇವಿಯ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಬಹುಮಂದಿ ಸುಂಕದವರೂ ತಿರಸ್ಕಾರ ಹೊಂದಿದ ಪಾಪಿಗಳೂ ಬಂದು ಯೇಸುವಿನೊಂದಿಗೂ ಅವರ ಶಿಷ್ಯರೊಂದಿಗೂ ಕುಳಿತುಕೊಂಡರು. ಬಹುಜನರು ಅವರನ್ನು ಹಿಂಬಾಲಿಸುತ್ತಿದ್ದರು.</verse>
				<verse number="16">ಫರಿಸಾಯರಾದ ನಿಯಮ ಬೋಧಕರು ಪಾಪಿಗಳ ಮತ್ತು ಸುಂಕದವರ ಸಂಗಡ ಯೇಸು ಊಟಮಾಡುವುದನ್ನು ಕಂಡು, “ಈತನು ಸುಂಕದವರ ಮತ್ತು ಪಾಪಿಗಳ ಸಂಗಡ ಏಕೆ ಊಟಮಾಡುತ್ತಾನೆ?” ಎಂದು ಯೇಸುವಿನ ಶಿಷ್ಯರನ್ನು ಕೇಳಿದರು.</verse>
				<verse number="17">ಯೇಸು ಇದನ್ನು ಕೇಳಿಸಿಕೊಂಡು ಅವರಿಗೆ, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ, ನಾನು ನೀತಿವಂತರನ್ನಲ್ಲ, ಪಾಪಿಗಳನ್ನು ಕರೆಯಲು ಬಂದಿದ್ದೇನೆ,” ಎಂದು ಹೇಳಿದರು.</verse>
				<verse number="18">ಯೋಹಾನನ ಶಿಷ್ಯರು ಮತ್ತು ಫರಿಸಾಯರು ಉಪವಾಸಮಾಡುತ್ತಿದ್ದರು. ಆಗ ಕೆಲವರು ಯೇಸುವಿನ ಬಳಿಗೆ ಬಂದು, “ಯೋಹಾನನ ಶಿಷ್ಯರು ಮತ್ತು ಫರಿಸಾಯರ ಶಿಷ್ಯರು ಉಪವಾಸ ಮಾಡುತ್ತಾರೆ, ಆದರೆ ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು.</verse>
				<verse number="19">ಅದಕ್ಕೆ ಯೇಸು ಅವರಿಗೆ, “ಮದುಮಗನು ತಮ್ಮ ಜೊತೆಯಲ್ಲಿ ಇರುವ ತನಕ ಮದುಮಗನ ಆಪ್ತರು ಹೇಗೆ ಉಪವಾಸ ಮಾಡುವರು? ಮದುಮಗನು ಅವರ ಸಂಗಡ ಇರುವವರೆಗೆ ಅವರು ಉಪವಾಸ ಮಾಡಲಾಗದು.</verse>
				<verse number="20">ಆದರೆ ಮದುಮಗನು ಅವರಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆಗ ಅವರು ಉಪವಾಸ ಮಾಡುವರು.</verse>
				<verse number="21">“ಯಾರೂ ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತೇಪೆಯನ್ನು ಹಾಕುವುದಿಲ್ಲ. ಹಚ್ಚಿದರೆ, ಆ ತೇಪೆಯು ಬಟ್ಟೆಯನ್ನು ಹಿಂಜಿ ಹರಕನ್ನು ಇನ್ನೂ ದೊಡ್ಡದು ಮಾಡುತ್ತದೆ.</verse>
				<verse number="22">ಯಾರೂ ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಚರ್ಮದ ಚೀಲಗಳು ಹರಿದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ. ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ತುಂಬಿಡುತ್ತಾರೆ,” ಎಂದು ಹೇಳಿದರು.</verse>
				<verse number="23">ಒಂದು ಸಬ್ಬತ್ ದಿನದಂದು ಯೇಸು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದರು. ಯೇಸುವಿನ ಶಿಷ್ಯರು ನಡೆಯುತ್ತಾ ಹೋಗುವಾಗ ತೆನೆಗಳನ್ನು ಮುರಿದುಕೊಂಡರು.</verse>
				<verse number="24">ಆಗ ಫರಿಸಾಯರು ಯೇಸುವಿಗೆ, “ಇಲ್ಲಿ ನೋಡು, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಯಮಕ್ಕೆ ವಿರುದ್ಧವಾಗಿರುವದನ್ನು ಏಕೆ ಮಾಡುತ್ತಾರೆ?” ಎಂದು ಹೇಳಿದರು.</verse>
				<verse number="25">ಯೇಸು ಅವರಿಗೆ, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗಲೂ ಅವಶ್ಯಕತೆಯಲ್ಲಿದ್ದಾಗಲೂ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೋ?</verse>
				<verse number="26">ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ, ದೇವರ ಆಲಯದೊಳಗೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವುದಕ್ಕೆ ನಿಯಮ ಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತೆಗೆದುಕೊಂಡು ತಿಂದು, ತನ್ನ ಸಂಗಡಿಗರಿಗೂ ಕೊಟ್ಟನು,” ಎಂದರು.</verse>
				<verse number="27">ಅನಂತರ ಯೇಸು ಅವರಿಗೆ, “ಮನುಷ್ಯನು ಸಬ್ಬತ್ ದಿನಕ್ಕಾಗಲಿ ಅಲ್ಲ, ಸಬ್ಬತ್ ದಿನವು ಮನುಷ್ಯನಿಗಾಗಿ ಮಾಡಲಾಯಿತು.</verse>
				<verse number="28">ಆದ್ದರಿಂದ ಮನುಷ್ಯಪುತ್ರನಾದ ನಾನು ಸಬ್ಬತ್ ದಿನಕ್ಕೂ ಒಡೆಯನಾಗಿದ್ದೇನೆ,” ಎಂದು ಹೇಳಿದರು.</verse>
			</chapter>
			<chapter number="3">
				<verse number="1">ಇನ್ನೊಂದು ಸಾರಿ ಯೇಸು ಸಭಾಮಂದಿರಕ್ಕೆ ಹೋದರು. ಅಲ್ಲಿ ಕೈ ಬತ್ತಿದ ಒಬ್ಬ ಮನುಷ್ಯನಿದ್ದನು.</verse>
				<verse number="2">ಕೆಲವರು ಯೇಸುವಿನ ಮೇಲೆ ತಪ್ಪು ಹೊರಿಸಬೇಕೆಂದು, ಸಬ್ಬತ್ ದಿನದಲ್ಲಿ ಅವನನ್ನು ಯೇಸು ಗುಣಪಡಿಸುವರೋ ಏನೋ ಎಂದು ಲಕ್ಷವಿಟ್ಟು ನೋಡುತ್ತಿದ್ದರು.</verse>
				<verse number="3">ಯೇಸು ಕೈಬತ್ತಿದವನಿಗೆ, “ಎದ್ದು ಮುಂದೆ ಬಾ,” ಎಂದರು.</verse>
				<verse number="4">ಆಗ ಯೇಸು ಅವರನ್ನು, “ಸಬ್ಬತ್ ದಿನದಲ್ಲಿ ಒಳ್ಳೆಯದನ್ನು ಮಾಡುವುದು ನಿಯಮಕ್ಕೆ ಸಮ್ಮತವೋ ಅಥವಾ ಕೆಟ್ಟದ್ದನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಥವಾ ತೆಗೆಯುವುದೋ?” ಎಂದು ಕೇಳಿದರು. ಅದಕ್ಕೆ ಅವರು ಸುಮ್ಮನಿದ್ದರು.</verse>
				<verse number="5">ಆಗ ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ನೋಡಿ, ಅವರ ಹೃದಯಕಾಠಿಣ್ಯಕ್ಕಾಗಿ ದುಃಖಪಟ್ಟು, ಆ ಮನುಷ್ಯನಿಗೆ, “ನಿನ್ನ ಕೈಚಾಚು,” ಎಂದು ಹೇಳಿದರು. ಅವನು ಕೈಚಾಚಿದಾಗ, ಅವನ ಕೈ ಸಂಪೂರ್ಣವಾಗಿ ಗುಣವಾಯಿತು.</verse>
				<verse number="6">ಫರಿಸಾಯರು ಅಲ್ಲಿಂದ ಹೊರಗೆ ಹೋಗಿ ಕೂಡಲೇ ಹೆರೋದ್ಯರೊಂದಿಗೆ ಸೇರಿಕೊಂಡು ಯೇಸುವನ್ನು ಹೇಗೆ ಕೊಲ್ಲಬೇಕೆಂದು ಅವರ ವಿರೋಧವಾಗಿ ಒಳಸಂಚು ಮಾಡಿದರು.</verse>
				<verse number="7">ಯೇಸು ತಮ್ಮ ಶಿಷ್ಯರೊಂದಿಗೆ ಸರೋವರದ ಬಳಿಗೆ ಹೊರಟು ಹೋದರು. ಗಲಿಲಾಯದಿಂದ ಬಂದ ಒಂದು ದೊಡ್ಡ ಜನರ ಗುಂಪು ಯೇಸುವನ್ನು ಹಿಂಬಾಲಿಸಿತು.</verse>
				<verse number="8">ಯೇಸು ಮಾಡುತ್ತಿದ್ದ ಎಲ್ಲವನ್ನು ಕೇಳಿ, ಬಹುಜನರು ಯೂದಾಯದಿಂದಲೂ ಯೆರೂಸಲೇಮ್ ನಗರದಿಂದಲೂ ಇದುಮಾಯದಿಂದಲೂ ಯೊರ್ದನ್ ನದಿಯ ಆಚೆಕಡೆಯಿಂದಲೂ ಟೈರ್, ಸೀದೋನ್ ಪಟ್ಟಣಗಳ ಸುತ್ತಲಿನಿಂದಲೂ ಯೇಸುವಿನ ಬಳಿಗೆ ಬಂದರು.</verse>
				<verse number="9">ಜನರ ಗುಂಪು ಹೆಚ್ಚಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು ತಮಗಾಗಿ ಒಂದು ಚಿಕ್ಕ ದೋಣಿಯನ್ನು ಸಿದ್ಧವಾಗಿಡಲು ತಮ್ಮ ಶಿಷ್ಯರಿಗೆ ಹೇಳಿದರು.</verse>
				<verse number="10">ಯೇಸು ಅನೇಕರನ್ನು ಗುಣಪಡಿಸಿದ್ದರಿಂದ ರೋಗಿಗಳೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ನುಗ್ಗುತ್ತಿದ್ದರು.</verse>
				<verse number="11">ದುರಾತ್ಮಗಳು ಯೇಸುವನ್ನು ಕಂಡಾಗಲೆಲ್ಲಾ ಅವರ ಮುಂದೆ ಬಿದ್ದು, “ನೀವು ದೇವರ ಪುತ್ರ,” ಎಂದು ಕಿರುಚಿದವು.</verse>
				<verse number="12">ಆದರೆ ಯೇಸು, ತಾನು ಯಾರೆಂದು ಯಾರಿಗೂ ಪ್ರಕಟಿಸಬಾರದೆಂದು ಅವುಗಳಿಗೆ ಕಟ್ಟಪ್ಪಣೆ ಮಾಡಿದರು.</verse>
				<verse number="13">ಯೇಸು ಬೆಟ್ಟವನ್ನೇರಿ ತಮಗೆ ಬೇಕಾದವರನ್ನು ಕರೆದರು. ಅವರು ಯೇಸುವಿನ ಬಳಿಗೆ ಬಂದರು.</verse>
				<verse number="14">ಯೇಸು ಹನ್ನೆರಡು ಮಂದಿಯನ್ನು ತಮ್ಮ ಸಂಗಡ ಇರಲು ಮತ್ತು ಅವರನ್ನು ಉಪದೇಶಮಾಡಲು ನೇಮಿಸಿ, ಅವರಿಗೆ “ಅಪೊಸ್ತಲರು” ಎಂದು ಕರೆದರು.</verse>
				<verse number="15">ಅವರಿಗೆ ದೆವ್ವಗಳನ್ನು ಓಡಿಸುವ ಅಧಿಕಾರ ಕೊಟ್ಟರು.</verse>
				<verse number="16">ಯೇಸು ನೇಮಿಸಿದ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳು ಇಂತಿವೆ: ಸೀಮೋನನಿಗೆ ಯೇಸು “ಪೇತ್ರ” ಎಂಬ ಹೆಸರನ್ನು ಕೊಟ್ಟರು.</verse>
				<verse number="17">ಜೆಬೆದಾಯನ ಮಗ ಯಾಕೋಬ ಮತ್ತು ಅವನ ತಮ್ಮ ಯೋಹಾನ ಇವರಿಗೆ ಯೇಸು “ಬೊವನೆರ್ಗೆಸ್” ಎಂದರೆ ಗುಡುಗಿನ ಪುತ್ರರು ಎಂಬ ಹೆಸರಿಟ್ಟರು.</verse>
				<verse number="18">ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗ ಯಾಕೋಬ, ತದ್ದಾಯ, ಕಾನಾನ್ಯನಾದ ಸೀಮೋನನು.</verse>
				<verse number="19">ಯೇಸುವಿಗೆ ದ್ರೋಹಮಾಡಿದ ಇಸ್ಕರಿಯೋತ ಯೂದ.</verse>
				<verse number="20">ಯೇಸು ಒಂದು ಮನೆಯೊಳಗೆ ಹೋದಾಗ, ಜನರು ತಿರುಗಿ ಗುಂಪಾಗಿ ನೆರೆದು ಬಂದದ್ದರಿಂದ ಯೇಸುವಿಗೂ ಅವರ ಶಿಷ್ಯರಿಗೂ ಊಟಮಾಡುವುದಕ್ಕೂ ಸಾಧ್ಯವಾಗಲಿಲ್ಲ.</verse>
				<verse number="21">ಯೇಸುವಿನ ಕುಟುಂಬದವರು ಇದನ್ನು ಕೇಳಿದಾಗ, “ಆತನಿಗೆ ಹುಚ್ಚುಹಿಡಿದಿದೆ,” ಎಂದು ಹೇಳಿ, ಯೇಸುವನ್ನು ಹಿಡಿದು ತರಲು ಹೊರಟರು.</verse>
				<verse number="22">ಯೆರೂಸಲೇಮಿನಿಂದ ಬಂದ ನಿಯಮ ಬೋಧಕರು, “ಈತನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ! ದೆವ್ವಗಳ ಅಧಿಪತಿಯ ಸಹಾಯದಿಂದಲೇ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು.</verse>
				<verse number="23">ಆಗ ಯೇಸು ಅವರನ್ನು ಹತ್ತಿರಕ್ಕೆ ಕರೆದು ಸಾಮ್ಯರೂಪದಲ್ಲಿ ಹೇಳಿದ್ದೇನೆಂದರೆ: “ಸೈತಾನನು ಸೈತಾನನನ್ನು ಓಡಿಸುವುದು ಹೇಗೆ?</verse>
				<verse number="24">ಒಂದು ರಾಜ್ಯ ತನಗೆ ವಿರೋಧವಾಗಿ ವಿಭಾಗಿಸಿಕೊಂಡರೆ ಆ ರಾಜ್ಯವು ನಿಲ್ಲುವುದಿಲ್ಲ.</verse>
				<verse number="25">ಒಂದು ಕುಟುಂಬ ತನಗೆ ವಿರೋಧವಾಗಿ ವಿಭಾಗಿಸಿಕೊಂಡರೆ ಆ ಕುಟುಂಬವು ನಿಲ್ಲುವುದಿಲ್ಲ.</verse>
				<verse number="26">ಸೈತಾನನು ತನಗೆ ವಿರೋಧವಾಗಿ ತಾನೇ ಎದ್ದು ವಿಭಾಗಿಸಿಕೊಂಡರೆ, ಅವನು ನಿಲ್ಲಲಾರದೆ ನಾಶವಾಗುವನು.</verse>
				<verse number="27">ಒಬ್ಬನು ಬಲಿಷ್ಠನ ಮನೆಗೆ ನುಗ್ಗಿ ಮೊದಲು ಅವನನ್ನು ಕಟ್ಟಿಹಾಕದೆ ಅವನ ಸೊತ್ತನ್ನು ಸೂರೆ ಮಾಡಲಾಗುವುದಿಲ್ಲ. ಮೊದಲು ಅವನನ್ನು ಕಟ್ಟಿದ ನಂತರ ಅವನ ಮನೆಯನ್ನು ಕೊಳ್ಳೆ ಹೊಡೆಯಬಹುದು.</verse>
				<verse number="28">ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೆ ಮತ್ತು ದೂಷಣೆಗಳಿಗೆ ಕ್ಷಮಾಪಣೆ ದೊರೆಯುವುದು.</verse>
				<verse number="29">ಆದರೆ ಪವಿತ್ರಾತ್ಮರನ್ನು ದೂಷಿಸುವವನಿಗೆ ಎಂದಿಗೂ ಕ್ಷಮಾಪಣೆ ದೊರೆಯುವುದಿಲ್ಲ. ಅವನು ನಿತ್ಯ ಪಾಪದ ಅಪರಾಧಿಯಾಗಿದ್ದಾನೆ,” ಎಂದರು.</verse>
				<verse number="30">“ಆತನಲ್ಲಿ ಅಶುದ್ಧಾತ್ಮವಿದೆ,” ಎಂದು ಅವರು ಹೇಳುತ್ತಿದ್ದುದರಿಂದ ಯೇಸು ಹೀಗೆ ಹೇಳಿದರು.</verse>
				<verse number="31">ಆಗ ಯೇಸುವಿನ ತಾಯಿ ಮತ್ತು ಸಹೋದರರು ಬಂದು ಹೊರಗೆ ನಿಂತುಕೊಂಡು, ಯೇಸುವನ್ನು ಕರೆಯಲು ಹೇಳಿ ಕಳುಹಿಸಿದರು.</verse>
				<verse number="32">ಯೇಸುವಿನ ಸುತ್ತಲೂ ಗುಂಪಾಗಿ ಕುಳಿತಿದ್ದ ಜನರು ಅವರಿಗೆ, “ನಿಮ್ಮ ತಾಯಿಯೂ ಸಹೋದರರೂ ನಿಮಗಾಗಿ ಹೊರಗೆ ಕಾದಿದ್ದಾರೆ,” ಎಂದು ಹೇಳಿದರು.</verse>
				<verse number="33">ಅದಕ್ಕೆ ಯೇಸು, “ನನ್ನ ತಾಯಿ ಮತ್ತು ಸಹೋದರರು ಯಾರು?” ಎಂದು ಕೇಳಿದರು.</verse>
				<verse number="34">ಅನಂತರ ತಮ್ಮ ಸುತ್ತಲೂ ಕುಳಿತ್ತಿದ್ದವರನ್ನು ನೋಡಿ, “ಇಗೋ, ಇವರೇ ನನ್ನ ತಾಯಿ ಮತ್ತು ನನ್ನ ಸಹೋದರರು!</verse>
				<verse number="35">ದೇವರ ಚಿತ್ತದಂತೆ ಮಾಡುವವರೇ ನನ್ನ ಸಹೋದರ, ಸಹೋದರಿ ಮತ್ತು ತಾಯಿ ಆಗಿದ್ದಾರೆ,” ಎಂದು ಹೇಳಿದರು.</verse>
			</chapter>
			<chapter number="4">
				<verse number="1">ಯೇಸು ಮತ್ತೊಮ್ಮೆ ಗಲಿಲಾಯ ಸರೋವರದ ತೀರದಲ್ಲಿ ಬೋಧಿಸಲಾರಂಭಿಸಿದರು. ಜನರು ಗುಂಪುಗುಂಪಾಗಿ ಯೇಸುವಿನ ಸುತ್ತಲೂ ನೆರೆದು ಬಂದದ್ದರಿಂದ ಯೇಸು ಸರೋವರದಲ್ಲಿದ್ದ ದೋಣಿಯನ್ನು ಹತ್ತಿ ಕುಳಿತುಕೊಂಡರು. ಜನರು ದಡದಲ್ಲಿ ಸುತ್ತಲೂ ನಿಂತಿದ್ದರು.</verse>
				<verse number="2">ಯೇಸು ಸಾಮ್ಯಗಳ ಮೂಲಕ ಅನೇಕ ಸಂಗತಿಗಳನ್ನು ಅವರಿಗೆ ಬೋಧಿಸಿ ಹೇಳಿದ್ದೇನೆಂದರೆ:</verse>
				<verse number="3">“ಕೇಳಿರಿ! ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು.</verse>
				<verse number="4">ಅವನು ಬಿತ್ತುತ್ತಿರುವಾಗ ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು. ಪಕ್ಷಿಗಳು ಬಂದು ಅವುಗಳನ್ನು ತಿಂದುಬಿಟ್ಟವು.</verse>
				<verse number="5">ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಬಂಡೆಯ ಸ್ಥಳಗಳಲ್ಲಿ ಬಿದ್ದವು. ಅಲ್ಲಿ ಆಳವಾದ ಮಣ್ಣಿಲ್ಲದ ಕಾರಣ ಅವು ಬೇಗನೆ ಮೊಳೆತವು.</verse>
				<verse number="6">ಆದರೆ ಬಿಸಿಲೇರಿದಾಗ ಅವು ಬಾಡಿಹೋಗಿ, ಬೇರಿಲ್ಲದ ಕಾರಣ ಒಣಗಿಹೋದವು.</verse>
				<verse number="7">ಮತ್ತೆ ಕೆಲವು ಬೀಜಗಳು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು. ಮುಳ್ಳುಗಿಡಗಳು ಬೆಳೆದು ಆ ಎಳೆಯ ಸಸಿಗಳನ್ನು ಅಡಗಿಸಿಬಿಟ್ಟಿದ್ದರಿಂದ ಅವು ಫಲ ಕೊಡಲಿಲ್ಲ.</verse>
				<verse number="8">ಇನ್ನು ಕೆಲವು ಬೀಜಗಳು ಒಳ್ಳೆಯ ಭೂಮಿಯಲ್ಲಿ ಬಿದ್ದು ಬೆಳೆದು ಮೂವತ್ತರಷ್ಟು, ಅರವತ್ತರಷ್ಟು, ನೂರರಷ್ಟು ಫಲಕೊಟ್ಟವು.”</verse>
				<verse number="9">ಅನಂತರ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ,” ಎಂದು ಹೇಳಿದರು.</verse>
				<verse number="10">ಯೇಸು ಒಬ್ಬರೇ ಇದ್ದಾಗ, ಹನ್ನೆರಡು ಮಂದಿ ಶಿಷ್ಯರು ಮತ್ತು ಯೇಸುವಿನ ಸುತ್ತಲಿದ್ದವರು ಬಂದು ಆ ಸಾಮ್ಯಗಳ ವಿಷಯವಾಗಿ ಕೇಳಿದರು.</verse>
				<verse number="11">ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯವನ್ನು ತಿಳಿದುಕೊಳ್ಳುವ ಜ್ಞಾನ ನಿಮಗೆ ಕೊಡಲಾಗಿದೆ. ಆದರೆ ಹೊರಗಿನವರಿಗೆ ಎಲ್ಲವೂ ಸಾಮ್ಯದ ರೂಪದಲ್ಲಿ ಹೇಳಲಾಗಿದೆ.</verse>
				<verse number="12">ಈ ಕಾರಣದಿಂದ, “ ‘ಅವರು ಕಣ್ಣಿದ್ದರೂ ಕಾಣುವುದಿಲ್ಲ. ಕೇಳಿಸಿಕೊಳ್ಳುತ್ತಿದ್ದರೂ ಗ್ರಹಿಸುವುದಿಲ್ಲ. ಹಾಗೆ ಮಾಡುವುದಾದರೆ, ಅವರು ದೇವರ ಕಡೆಗೆ ತಿರುಗಿಕೊಂಡು ಕ್ಷಮೆಹೊಂದುತ್ತಿದ್ದರು!’ ” ಎಂದರು.</verse>
				<verse number="13">ಅನಂತರ ಯೇಸು ಅವರಿಗೆ, “ನಿಮಗೆ ಈ ಸಾಮ್ಯ ಅರ್ಥವಾಗಲಿಲ್ಲವೇ? ಹಾಗಾದರೆ ನೀವು ಬೇರೆ ಸಾಮ್ಯಗಳನ್ನು ಹೇಗೆ ಅರ್ಥಮಾಡಿಕೊಳ್ಳುವಿರಿ?</verse>
				<verse number="14">ರೈತನು ‘ವಾಕ್ಯ’ ಎಂಬ ಬೀಜ ಬಿತ್ತುತ್ತಾನೆ.</verse>
				<verse number="15">ಕೆಲವರು ದಾರಿಯ ಪಕ್ಕದಲ್ಲಿ ಬಿದ್ದ ಬೀಜದಂತಿದ್ದಾರೆ. ಅವರು ವಾಕ್ಯ ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ದೇವರ ವಾಕ್ಯವನ್ನು ತೆಗೆದುಬಿಡುತ್ತಾನೆ.</verse>
				<verse number="16">ಇನ್ನೂ ಕೆಲವರು ಕಲ್ಲು ನೆಲದ ಮೇಲೆ ಬಿದ್ದ ಬೀಜದಂತಿರುವರು. ಅವರು ವಾಕ್ಯವನ್ನು ಕೇಳಿದ ಕೂಡಲೇ ಸಂತೋಷದಿಂದ ಅದನ್ನು ಸ್ವೀಕರಿಸುತ್ತಾರೆ.</verse>
				<verse number="17">ಆದರೆ ಅವರಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇದ್ದು, ವಾಕ್ಯದ ನಿಮಿತ್ತವಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ, ಅವರು ಬೇಗನೆ ಬಿದ್ದು ಹೋಗುತ್ತಾರೆ.</verse>
				<verse number="18">ಮತ್ತೆ ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜದಂತಿದ್ದಾರೆ. ಅವರು ವಾಕ್ಯವನ್ನು ಕೇಳುತ್ತಾರೆ.</verse>
				<verse number="19">ಆದರೆ ಈ ಜೀವನದ ಚಿಂತೆಗಳೂ ಐಶ್ವರ್ಯದ ವ್ಯಾಮೋಹವೂ ಇನ್ನಿತರ ಅಭಿಲಾಷೆಗಳು ಸೇರಿ ದೇವರ ವಾಕ್ಯವನ್ನು ಅಡಗಿಸುವುದರಿಂದ, ವಾಕ್ಯವು ಫಲವನ್ನು ಕೊಡುವುದಿಲ್ಲ.</verse>
				<verse number="20">ಇನ್ನೂ ಕೆಲವರು ಒಳ್ಳೆಯ ಭೂಮಿಯಲ್ಲಿ ಬಿದ್ದ ಬೀಜದಂತಿದ್ದು, ವಾಕ್ಯವನ್ನು ಕೇಳಿ ಅಂಗೀಕರಿಸಿ, ಮೂವತ್ತರಷ್ಟು, ಅರವತ್ತರಷ್ಟು, ನೂರರಷ್ಟು ಫಲಕೊಡುತ್ತಾರೆ,” ಎಂದರು.</verse>
				<verse number="21">ಯೇಸು ಅವರಿಗೆ, “ಯಾರಾದರೂ ದೀಪವನ್ನು ತಂದು ಬೋಗುಣಿಯೊಳಗೆ ಅಥವಾ ಮಂಚದ ಕೆಳಗೆ ಇಡುತ್ತಾರೋ? ಅದರ ಬದಲು ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ.</verse>
				<verse number="22">ಮರೆಯಾಗಿರುವ ಯಾವುದೂ ವ್ಯಕ್ತವಾಗದೇ ಇರುವುದಿಲ್ಲ. ರಹಸ್ಯಗಳು ಬಹಿರಂಗವಾಗದೆ ಇರುವುದಿಲ್ಲ.</verse>
				<verse number="23">ಕಿವಿಯುಳ್ಳವರು ಕೇಳಲಿ.”</verse>
				<verse number="24">ಮತ್ತು ಯೇಸು ಅವರಿಗೆ, “ನೀವು ಕೇಳುವುದನ್ನು ಎಚ್ಚರಿಕೆಯಿಂದ ಗಮನಿಸಿರಿ; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು; ಇನ್ನೂ ಹೆಚ್ಚಾಗಿ ಸೇರಿಸಿಕೊಡಲಾಗುವುದು.</verse>
				<verse number="25">ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು. ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ತೆಗೆದುಕೊಳ್ಳಲಾಗುವುದು,” ಎಂದು ಹೇಳಿದರು.</verse>
				<verse number="26">ಯೇಸು, “ದೇವರ ರಾಜ್ಯವು ಹೀಗಿದೆ: ಒಬ್ಬನು ತನ್ನ ಹೊಲದಲ್ಲಿ ಬೀಜವನ್ನು ಬಿತ್ತಿದನು.</verse>
				<verse number="27">ರಾತ್ರಿ ಅವನು ಮಲಗಿದ್ದರೂ ಹಗಲು ಎದ್ದಿದ್ದರೂ ಆ ಬೀಜವು ಅವನಿಗೆ ತಿಳಿಯದ ರೀತಿಯಲ್ಲಿ ಅಂಕುರಿಸಿ ಬೆಳೆಯುತ್ತದೆ.</verse>
				<verse number="28">ಭೂಮಿಯು ಮೊದಲು ಸಸಿಯನ್ನು ಆಮೇಲೆ ಹೊಡೆಯನ್ನು ಅನಂತರ ತೆನೆಯ ತುಂಬಾ ಕಾಳನ್ನು ತನ್ನಷ್ಟಕ್ಕೆ ತಾನೇ ಬೆಳೆಸುತ್ತದೆ.</verse>
				<verse number="29">ಬೆಳೆಯು ಮಾಗಿದ ಕೂಡಲೇ, ಅವನು ಕುಡುಗೋಲನ್ನು ಉಪಯೋಗಿಸುತ್ತಾನೆ. ಏಕೆಂದರೆ ಸುಗ್ಗಿಯು ಬಂದಿದೆ,” ಎಂದರು.</verse>
				<verse number="30">ಯೇಸು ಮುಂದುವರಿಸಿ, “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸೋಣ ಅಥವಾ ಅದನ್ನು ವಿವರಿಸಲು ಯಾವ ಸಾಮ್ಯವನ್ನು ಉಪಯೋಗಿಸೋಣ?</verse>
				<verse number="31">ಅದು ಭೂಮಿಯ ಎಲ್ಲಾ ಬೀಜಗಳಿಗಿಂತ ಅತಿ ಚಿಕ್ಕದಾದ ಸಾಸಿವೆ ಕಾಳಿನಂತಿದೆ.</verse>
				<verse number="32">ಅದನ್ನು ಬಿತ್ತಿದ ಮೇಲೆ, ಅದು ಬೆಳೆದು ತೋಟದ ಎಲ್ಲಾ ಸಸ್ಯಗಳಿಗಿಂತಲೂ ದೊಡ್ಡ ರೆಂಬೆಗಳುಳ್ಳ ಮರವಾಗಿ ಬೆಳೆಯುತ್ತದೆ. ಆಕಾಶದ ಪಕ್ಷಿಗಳು ಬಂದು ಅದರ ನೆರಳಿನಲ್ಲಿ ಗೂಡು ಕಟ್ಟಿ ವಾಸಿಸುತ್ತವೆ,” ಎಂದು ಹೇಳಿದರು.</verse>
				<verse number="33">ಈ ರೀತಿಯ ಅನೇಕ ಸಾಮ್ಯಗಳಿಂದ ಅವರ ಗ್ರಹಿಕೆಗೆ ತಕ್ಕ ಹಾಗೆ ಯೇಸು ಅವರಿಗೆ ವಾಕ್ಯವನ್ನು ಉಪದೇಶಿಸುತ್ತಿದ್ದರು.</verse>
				<verse number="34">ಸಾಮ್ಯವಿಲ್ಲದೆ ಯೇಸು ಅವರಿಗೆ ಏನೂ ಹೇಳುತ್ತಿರಲಿಲ್ಲ. ಆದರೆ ಯೇಸು ತಮ್ಮ ಶಿಷ್ಯರೊಡನೆ ಏಕಾಂತವಾಗಿದ್ದಾಗ ಮಾತ್ರ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.</verse>
				<verse number="35">ಆ ದಿನ ಸಂಜೆಯಾದಾಗ ಯೇಸು ತಮ್ಮ ಶಿಷ್ಯರಿಗೆ, “ನಾವು ಆಚೆದಡಕ್ಕೆ ಹೋಗೋಣ,” ಎಂದು ಹೇಳಿದರು.</verse>
				<verse number="36">ಅವರು ಜನರ ಗುಂಪನ್ನು ಬಿಟ್ಟು, ಯೇಸುವನ್ನು ಇದ್ದ ಹಾಗೆಯೇ ದೋಣಿಯಲ್ಲಿ ಕರೆದುಕೊಂಡು ಹೋದರು. ಯೇಸುವಿನ ಸಂಗಡ ಬೇರೆ ದೋಣಿಗಳೂ ಇದ್ದವು.</verse>
				<verse number="37">ಇದ್ದಕ್ಕಿದ್ದ ಹಾಗೆ ದೊಡ್ಡ ಬಿರುಗಾಳಿಯು ರಭಸವಾಗಿ ಬೀಸಿದ್ದರಿಂದ ಅಲೆಗಳು ದೋಣಿಗೆ ಅಪ್ಪಳಿಸಿದವು. ಆಗ ದೋಣಿಯೊಳಗೆ ನೀರು ನುಗ್ಗಿ ಅದು ಮುಳುಗಿ ಹೋಗುವುದರಲ್ಲಿತ್ತು.</verse>
				<verse number="38">ಯೇಸು ದೋಣಿಯ ಹಿಂಭಾಗದಲ್ಲಿ ದಿಂಬಿನ ಮೇಲೆ ಒರಗಿ ನಿದ್ದೆಮಾಡುತ್ತಿದ್ದರು. ಶಿಷ್ಯರು ಯೇಸುವನ್ನು ಎಬ್ಬಿಸಿ, “ಗುರುವೇ, ನಾವು ಮುಳುಗಿ ಸಾಯುತ್ತಿದ್ದೇವೆ. ನಿಮಗೆ ಚಿಂತೆಯಿಲ್ಲವೇ?” ಎಂದು ಕೇಳಿದರು.</verse>
				<verse number="39">ಯೇಸು ಎದ್ದು ಬಿರುಗಾಳಿಯನ್ನು ಗದರಿಸಿದರು ಮತ್ತು ಅಲೆಗಳಿಗೆ, “ಸುಮ್ಮನಿರು, ಶಾಂತವಾಗು!” ಎಂದು ಆಜ್ಞಾಪಿಸಿದರು. ಆಗ ಬಿರುಗಾಳಿಯು ನಿಂತು ಹೋಗಿ ಎಲ್ಲವೂ ಪ್ರಶಾಂತವಾಯಿತು.</verse>
				<verse number="40">ಯೇಸು ತಮ್ಮ ಶಿಷ್ಯರಿಗೆ, “ನೀವು ಏಕೆ ಭಯಪಡುತ್ತೀರಿ? ನಿಮಗೆ ಇನ್ನೂ ನಂಬಿಕೆಯಿಲ್ಲವೇ?” ಎಂದರು.</verse>
				<verse number="41">ಶಿಷ್ಯರು ಭಯಭೀತರಾಗಿ, “ಇವರು ಯಾರಿರಬಹುದು? ಗಾಳಿಯೂ ಸರೋವರವೂ ಸಹ ಇವರ ಮಾತುಗಳನ್ನು ಕೇಳುತ್ತವಲ್ಲಾ!” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.</verse>
			</chapter>
			<chapter number="5">
				<verse number="1">ಅವರೆಲ್ಲರು ಸರೋವರದ ಆಚೆಯ ಕಡೆಯಲ್ಲಿದ್ದ ಗೆರಸೇನರ ಪ್ರಾಂತವನ್ನು ಸೇರಿದರು.</verse>
				<verse number="2">ಯೇಸು ದೋಣಿಯಿಂದ ಇಳಿದುಬರುವಾಗ, ಅಶುದ್ಧಾತ್ಮವುಳ್ಳ ಒಬ್ಬನು ಸಮಾಧಿಯ ಗುಹೆಯೊಳಗಿಂದ ಹೊರಬಂದು ಅವರನ್ನು ಸಂಧಿಸಿದನು.</verse>
				<verse number="3">ಅವನು ಸಮಾಧಿಯ ಗುಹೆಗಳ ನಡುವೆ ವಾಸಿಸುತ್ತಿದ್ದನು ಮತ್ತು ಯಾರಿಗೂ ಅವನನ್ನು ಬಂಧಿಸಲು ಸಾಧ್ಯವಾಗುತ್ತಿರಲಿಲ್ಲ. ಸರಪಣಿಯಿಂದಲೂ ಅವನನ್ನು ಕಟ್ಟಿ ಹಾಕಲು ಆಗುತ್ತಿರಲಿಲ್ಲ.</verse>
				<verse number="4">ಅನೇಕ ಸಾರಿ ಅವನ ಕೈಕಾಲುಗಳನ್ನು ಸರಪಣಿಗಳಿಂದ ಕಟ್ಟಿಹಾಕಿದ್ದರೂ ಅವನು ಅವುಗಳನ್ನು ಕಿತ್ತೆಸೆದು, ಬೇಡಿಗಳನ್ನು ತುಂಡುತುಂಡು ಮಾಡುತ್ತಿದ್ದನು. ಅವನನ್ನು ಹತೋಟಿಯಲ್ಲಿಡುವಷ್ಟು ಬಲ ಯಾರಿಗೂ ಇರಲಿಲ್ಲ.</verse>
				<verse number="5">ಅವನು ಹಗಲಿರುಳು ಸಮಾಧಿಯ ಗುಹೆಗಳಲ್ಲಿಯೂ ಗುಡ್ಡಗಳಲ್ಲಿಯೂ ಇರುವವನಾಗಿ ಅರಚುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಿದ್ದನು.</verse>
				<verse number="6">ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು, ಅವರ ಮುಂದೆ ಮೊಣಕಾಲೂರಿ,</verse>
				<verse number="7">ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!” ಎಂದು ಅರಚಿದನು.</verse>
				<verse number="8">ಏಕೆಂದರೆ ಯೇಸು ಅವನಿಗೆ, “ಅಶುದ್ಧಾತ್ಮವೇ ಅವನನ್ನು ಬಿಟ್ಟು ಹೊರಗೆ ಬಾ!” ಎಂದು ಹೇಳಿದ್ದರು.</verse>
				<verse number="9">ಅನಂತರ, ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದಾಗ, “ನನ್ನ ಹೆಸರು ಸೇನೆ, ಏಕೆಂದರೆ ನಾವು ಬಹುಮಂದಿ ಇದ್ದೇವೆ,” ಎಂದು ಹೇಳಿದನು.</verse>
				<verse number="10">ಅವುಗಳನ್ನು ಆ ಪ್ರಾಂತದಿಂದ ಹೊರಗಟ್ಟಬಾರದೆಂದು ಅವನು ಯೇಸುವನ್ನು ಬಹಳವಾಗಿ ಬೇಡಿಕೊಂಡನು.</verse>
				<verse number="11">ಹತ್ತಿರದಲ್ಲಿದ್ದ ಗುಡ್ಡದ ಸಮೀಪದಲ್ಲಿ ಹಂದಿಗಳ ಒಂದು ದೊಡ್ಡ ಹಿಂಡು ಮೇಯುತ್ತಿತ್ತು.</verse>
				<verse number="12">“ನಾವು ಆ ಹಂದಿಗಳ ಹಿಂಡಿನೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಅವುಗಳೊಳಗೆ ಕಳುಹಿಸಿಕೊಡಿ,” ಎಂದು ದೆವ್ವಗಳು ಯೇಸುವನ್ನು ಬೇಡಿಕೊಂಡವು.</verse>
				<verse number="13">ಯೇಸು ಅವುಗಳಿಗೆ ಅಪ್ಪಣೆಕೊಡಲು, ಆ ಅಶುದ್ಧಾತ್ಮಗಳು ಅವನಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಸುಮಾರು ಎರಡು ಸಾವಿರ ಹಂದಿಗಳಿದ್ದ ಆ ಹಿಂಡು ಓಡಿ ಕಡಿದಾದ ಬದಿಯಿಂದ ಸರೋವರದೊಳಗೆ ಬಿದ್ದು ಮುಳುಗಿ ಸತ್ತು ಹೋದವು.</verse>
				<verse number="14">ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ನಡೆದ ಸಂಗತಿಯನ್ನು ತಿಳಿಸಿದರು ಮತ್ತು ನಡೆದದ್ದನ್ನು ಕಾಣಲು ಜನರು ಬಂದರು.</verse>
				<verse number="15">ಅವರು ಯೇಸುವಿನ ಬಳಿಗೆ ಬಂದಾಗ, ದೆವ್ವಗಳ ಸೇನೆಯಿಂದ ಪೀಡಿತನಾಗಿದ್ದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಭಯಪಟ್ಟರು.</verse>
				<verse number="16">ನಡೆದದ್ದನ್ನು ಕಂಡವರು, ದೆವ್ವಪೀಡಿತನಾಗಿದ್ದವನಿಗೆ ಏನಾಯಿತೆಂಬುದನ್ನು ಮತ್ತು ಹಂದಿಗಳಿಗಾದ ಗತಿಯನ್ನು ಜನರಿಗೆ ತಿಳಿಸಿದರು.</verse>
				<verse number="17">ಆಗ ಅವರು ಯೇಸುವಿಗೆ, ತಮ್ಮ ಪ್ರಾಂತವನ್ನು ಬಿಟ್ಟು ಹೊರಟುಹೋಗಬೇಕೆಂದು ಕೇಳಿಕೊಂಡರು.</verse>
				<verse number="18">ಯೇಸು ದೋಣಿಯನ್ನು ಹತ್ತುತ್ತಿದ್ದಾಗ, ದೆವ್ವಪೀಡಿತನಾಗಿದ್ದವನು ತನ್ನನ್ನು ಅವರ ಜೊತೆಯಲ್ಲಿ ಕರೆದುಕೊಂಡು ಹೋಗಬೇಕೆಂದು ಬೇಡಿಕೊಂಡನು.</verse>
				<verse number="19">ಯೇಸು ಅದಕ್ಕೊಪ್ಪದೆ ಅವನಿಗೆ, “ನೀನು ಮನೆಗೆ ಹೋಗಿ ನಿನ್ನ ಜನರಿಗೆ ಕರ್ತದೇವರು ನಿನಗೆ ಮಾಡಿರುವ ಮಹಾಕಾರ್ಯಗಳನ್ನು ಮತ್ತು ನಿನ್ನನ್ನು ಹೇಗೆ ಕರುಣಿಸಿದ್ದಾರೆ ಎಂಬುದನ್ನು ತಿಳಿಸು,” ಎಂದರು.</verse>
				<verse number="20">ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಮಹಾಕಾರ್ಯಗಳನ್ನು ದೆಕಪೊಲಿಯಲ್ಲಿ ಸಾರಲಾರಂಭಿಸಿದನು ಮತ್ತು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.</verse>
				<verse number="21">ಯೇಸು ಪುನಃ ದೋಣಿಯಲ್ಲಿ ಆಚೆಯ ದಡವನ್ನು ಮುಟ್ಟಿದಾಗ, ಜನರು ದೊಡ್ಡ ಗುಂಪಾಗಿ ಅವರ ಸುತ್ತಲೂ ಸೇರಿ ಬಂದರು.</verse>
				<verse number="22">ಯೇಸು ಸರೋವರದ ದಡದಲ್ಲಿದ್ದಾಗ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯೀರನು ಅಲ್ಲಿಗೆ ಬಂದು ಯೇಸುವನ್ನು ಕಂಡು ಅವರ ಪಾದಕ್ಕೆ ಬಿದ್ದು,</verse>
				<verse number="23">“ನನ್ನ ಚಿಕ್ಕ ಮಗಳು ಸಾಯುತ್ತಿದ್ದಾಳೆ. ಅವಳು ಗುಣಹೊಂದಿ ಬದುಕುವಂತೆ ದಯಮಾಡಿ ಬಂದು ಅವಳ ಮೇಲೆ ನಿಮ್ಮ ಕೈಗಳನ್ನಿಡಬೇಕು,” ಎಂದು ಬಹಳವಾಗಿ ಬೇಡಿಕೊಂಡನು.</verse>
				<verse number="24">ಆಗ ಯೇಸು ಅವನೊಂದಿಗೆ ಹೋದರು. ಜನರು ದೊಡ್ಡ ಗುಂಪಾಗಿ ಯೇಸುವನ್ನು ನೂಕುತ್ತಾ ಹಿಂಬಾಲಿಸಿದರು.</verse>
				<verse number="25">ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು.</verse>
				<verse number="26">ಆಕೆ ಅನೇಕ ವೈದ್ಯರ ಚಿಕಿತ್ಸೆಯಿಂದ ಬಹು ಶ್ರಮಪಟ್ಟು, ತನಗಿದ್ದದ್ದೆಲ್ಲವನ್ನು ಖರ್ಚು ಮಾಡಿದ್ದರೂ ಸ್ವಲ್ಪವೂ ಪ್ರಯೋಜನವಾಗದೆ ಆ ರೋಗವು ಇನ್ನೂ ಹೆಚ್ಚಾಗುತ್ತಾ ಬಂತು.</verse>
				<verse number="27">ಆಕೆ ಯೇಸುವಿನ ವಿಷಯವಾಗಿ ಕೇಳಿ, ಜನರ ಗುಂಪಿನಲ್ಲಿ ಅವರ ಹಿಂದೆ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು.</verse>
				<verse number="28">ಏಕೆಂದರೆ, “ನಾನು ಯೇಸುವಿನ ಉಡುಪನ್ನು ಮುಟ್ಟಿದರೆ ಸಾಕು, ನನಗೆ ಗುಣವಾಗುವುದು,” ಎಂದುಕೊಂಡಿದ್ದಳು.</verse>
				<verse number="29">ಕೂಡಲೇ ಆಕೆಯ ರಕ್ತಸ್ರಾವವು ನಿಂತಿತು ಮತ್ತು ರೋಗಬಾಧೆಯಿಂದ ತಾನು ಗುಣಹೊಂದಿದಳೆಂದು ಆಕೆಗೆ ತಿಳಿಯಿತು.</verse>
				<verse number="30">ಕೂಡಲೇ ಗುಣಪಡಿಸುವ ಶಕ್ತಿಯು ತನ್ನಿಂದ ಹೊರಟಿತೆಂದು ಯೇಸು ತಿಳಿದು, ಜನರ ನಡುವೆ ಸುತ್ತಲೂ ನೋಡಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಿದರು.</verse>
				<verse number="31">ಯೇಸುವಿನ ಶಿಷ್ಯರು ಅವರಿಗೆ, “ಇಷ್ಟು ದೊಡ್ಡ ಗುಂಪು ನಿಮ್ಮ ಸುತ್ತಲೂ ನೂಕುತ್ತಿರುವುದನ್ನು ನೀವೇ ಕಾಣುತ್ತಿರುವಲ್ಲಿ, ‘ನನ್ನನ್ನು ಮುಟ್ಟಿದವರು ಯಾರು,’ ಎಂದು ಕೇಳುತ್ತೀರಲ್ಲಾ?” ಎಂದರು.</verse>
				<verse number="32">ಆದರೆ ಯೇಸು ತಮ್ಮನ್ನು ಮುಟ್ಟಿದವರು ಯಾರು ಎಂದು ಕಾಣಲು ಸುತ್ತಲೂ ನೋಡಲಾರಂಭಿಸಿದರು.</verse>
				<verse number="33">ಆಗ ಆ ಸ್ತ್ರೀ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಬಂದು ಯೇಸುವಿನ ಮುಂದೆ ಅಡ್ಡಬಿದ್ದು, ಭಯದಿಂದ ನಡುಗುತ್ತಾ ನಡೆದ ಎಲ್ಲಾ ನಿಜಸಂಗತಿಯನ್ನು ತಿಳಿಸಿದಳು.</verse>
				<verse number="34">ಯೇಸು ಆ ಸ್ತ್ರೀಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು, ನಿನ್ನ ಬಾಧೆಯಿಂದ ನೀನು ಮುಕ್ತಳಾಗಿರುವೆ,” ಎಂದು ಹೇಳಿದರು.</verse>
				<verse number="35">ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಸಭಾಮಂದಿರದ ಅಧಿಕಾರಿಯಾದ ಯಾಯೀರನ ಮನೆಯಿಂದ ಕೆಲವರು ಬಂದು, “ನಿನ್ನ ಮಗಳು ತೀರಿಹೋದಳು. ಇನ್ನೂ ಗುರುವಿಗೆ ತೊಂದರೆಪಡಿಸುವುದೇಕೆ?” ಎಂದರು.</verse>
				<verse number="36">ಆದರೆ ಯೇಸು ಅವರು ಹೇಳಿದ ಮಾತನ್ನು ಲಕ್ಷ್ಯಮಾಡದೆ, ಆ ಸಭಾಮಂದಿರದ ಅಧಿಕಾರಿಗೆ, “ಭಯಪಡಬೇಡ ನಂಬಿಕೆ ಮಾತ್ರ ಇರಲಿ,” ಎಂದರು.</verse>
				<verse number="37">ಯೇಸು ತಮ್ಮ ಸಂಗಡ ಪೇತ್ರ, ಯಾಕೋಬ ಮತ್ತು ಅವನ ತಮ್ಮ ಯೋಹಾನನನ್ನು ಹೊರತು ಬೇರೆ ಯಾರನ್ನೂ ಬರುವುದಕ್ಕೆ ಅನುಮತಿಸಲಿಲ್ಲ.</verse>
				<verse number="38">ಅವರು ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ, ಯೇಸು ಜನರು ಬಹಳವಾಗಿ ಗೋಳಾಡುವುದನ್ನೂ ಪ್ರಲಾಪಿಸುವುದನ್ನೂ ಕಂಡರು.</verse>
				<verse number="39">ಯೇಸು ಮನೆಯೊಳಗೆ ಹೋಗಿ, “ನೀವು ಗೋಳಾಡಿ ಅಳುವುದೇಕೆ? ಮಗು ಸತ್ತಿಲ್ಲ, ಅವಳು ನಿದ್ದೆ ಮಾಡುತ್ತಿದ್ದಾಳೆ,” ಎಂದರು.</verse>
				<verse number="40">ಆದರೆ ಅವರು ಯೇಸುವನ್ನು ಪರಿಹಾಸ್ಯ ಮಾಡಿದರು. ಯೇಸು ಅವರನ್ನೆಲ್ಲಾ ಹೊರಗೆ ಹಾಕಿ, ಆ ಹುಡುಗಿಯ ತಂದೆತಾಯಿ ಮತ್ತು ತನ್ನೊಂದಿಗಿದ್ದ ಶಿಷ್ಯರನ್ನು ಮಾತ್ರ ಕರೆದುಕೊಂಡು ಆ ಹುಡುಗಿಯನ್ನಿಟ್ಟಿದ್ದ ಕೋಣೆಗೆ ಹೋದರು.</verse>
				<verse number="41">ಯೇಸು ಆಕೆಯ ಕೈಹಿಡಿದು, “ತಲಿಥಾ ಕೂಮ್!” ಎಂದರು. ಅರಮೀಯ ಭಾಷೆಯಲ್ಲಿ ಇದರ ಅರ್ಥ, “ಚಿಕ್ಕ ಹುಡುಗಿಯೇ! ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂಬುದು.</verse>
				<verse number="42">ಕೂಡಲೇ ಆ ಹುಡುಗಿ ಎದ್ದು ನಡೆದಾಡಿದಳು. ಆಕೆಗೆ ಹನ್ನೆರಡು ವಯಸ್ಸಾಗಿತ್ತು. ಎಲ್ಲರೂ ಬಹಳ ಆಶ್ಚರ್ಯಪಟ್ಟರು.</verse>
				<verse number="43">ಯೇಸು ಅವರಿಗೆ ನಡೆದದ್ದನ್ನು ಯಾರಿಗೂ ತಿಳಿಸಬಾರದು ಎಂದು ಬಹು ಖಂಡಿತವಾಗಿ ಹೇಳಿ ಹುಡುಗಿಗೆ ತಿನ್ನಲು ಏನಾದರೂ ಕೊಡಬೇಕೆಂದು ಹೇಳಿದರು.</verse>
			</chapter>
			<chapter number="6">
				<verse number="1">ಯೇಸು ಅಲ್ಲಿಂದ ಹೊರಟು ಶಿಷ್ಯರೊಡನೆ ತಮ್ಮ ಸ್ವಂತ ಊರಿಗೆ ಬಂದರು.</verse>
				<verse number="2">ಸಬ್ಬತ್ ದಿನ ಬಂದಾಗ, ಯೇಸು ಸಭಾಮಂದಿರದಲ್ಲಿ ಬೋಧಿಸಲಾರಂಭಿಸಿದರು. ಅದನ್ನು ಕೇಳಿದ ಅನೇಕರು ವಿಸ್ಮಯಗೊಂಡು, “ಈತನು ಇವೆಲ್ಲವನ್ನು ಎಲ್ಲಿಂದ ಪಡೆದಿದ್ದಾನೆ? ಈತನ ಕೈಗಳಿಂದ ಇಂಥ ಅದ್ಭುತಕಾರ್ಯಗಳನ್ನು ಮಾಡುವ ಜ್ಞಾನವು ಈತನಿಗೆ ಎಲ್ಲಿಂದ ಬಂತು?</verse>
				<verse number="3">ಈತನು ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ, ಯೋಸೆ, ಯೂದ ಮತ್ತು ಸೀಮೋನರ ಅಣ್ಣನಲ್ಲವೇ? ಈತನ ತಂಗಿಯರು ನಮ್ಮಲ್ಲಿ ಇದ್ದಾರಲ್ಲವೇ?” ಎಂದು ಹೇಳಿ, ಯೇಸುವಿನ ವಿಷಯವಾಗಿ ಬೇಸರಗೊಂಡರು.</verse>
				<verse number="4">ಯೇಸು ಅವರಿಗೆ, “ಪ್ರವಾದಿಗೆ ತನ್ನ ಸ್ವಂತ ಊರಿನಲ್ಲಿ, ತನ್ನ ಸಂಬಂಧಿಕರ ನಡುವೆ ಹಾಗೂ ತನ್ನ ಸ್ವಂತ ಮನೆಯಲ್ಲಿ ಮಾತ್ರ ಮರ್ಯಾದೆ ಇರುವುದಿಲ್ಲ,” ಎಂದರು.</verse>
				<verse number="5">ಅಲ್ಲಿ ಯೇಸು ಕೆಲವು ರೋಗಿಗಳ ಮೇಲೆ ಕೈಗಳನ್ನಿಟ್ಟು ಅವರನ್ನು ಗುಣಪಡಿಸಿದ್ದಲ್ಲದೆ ಬೇರೆ ಯಾವ ಅದ್ಭುತಗಳನ್ನೂ ಮಾಡಲಿಲ್ಲ.</verse>
				<verse number="6">ಯೇಸು ಅವರ ಅಪನಂಬಿಕೆಯನ್ನು ಕಂಡು ಆಶ್ಚರ್ಯಪಟ್ಟರು. ಆಮೇಲೆ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದರು.</verse>
				<verse number="7">ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಕರೆದು, ಅವರಿಗೆ ಅಶುದ್ಧಾತ್ಮಗಳನ್ನು ಹೊರಗಟ್ಟುವ ಅಧಿಕಾರವನ್ನು ಕೊಟ್ಟು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದರು.</verse>
				<verse number="8">ಯೇಸು ಅವರಿಗೆ, “ಪ್ರಯಾಣಕ್ಕಾಗಿ ಕೇವಲ ಕೋಲು ಒಂದನ್ನು ಬಿಟ್ಟು, ರೊಟ್ಟಿ, ಚೀಲ ಅಥವಾ ಜೇಬಿನಲ್ಲಿ ಹಣವನ್ನು ತೆಗೆದುಕೊಳ್ಳಬೇಡಿರಿ.</verse>
				<verse number="9">ಪಾದರಕ್ಷೆಗಳನ್ನು ಮೆಟ್ಟಿಕೊಳ್ಳಿರಿ. ಆದರೆ ಹೆಚ್ಚು ಅಂಗಿಗಳನ್ನು ತೆಗೆದುಕೊಳ್ಳಬೇಡಿರಿ,” ಎಂದು ಆಜ್ಞಾಪಿಸಿದರು.</verse>
				<verse number="10">ಇದಲ್ಲದೆ ಯೇಸು ಅವರಿಗೆ, “ನೀವು ಯಾವುದಾದರೊಂದು ಮನೆಗೆ ಹೋದಾಗ, ಅಲ್ಲೇ ಇದ್ದು ಆ ಪಟ್ಟಣದಿಂದ ಹೋಗುವವರೆಗೆ ಆ ಮನೆಯಲ್ಲೇ ವಾಸವಾಗಿದ್ದು, ಅಲ್ಲಿಂದಲೇ ಹೊರಡಿರಿ.</verse>
				<verse number="11">ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ ಅಥವಾ ನಿಮ್ಮ ಮಾತುಗಳನ್ನು ಕೇಳದಿದ್ದರೆ, ನೀವು ಹೊರಡುತ್ತಿರುವಾಗ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ. ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ,” ಎಂದರು.</verse>
				<verse number="12">ಶಿಷ್ಯರು ಹೊರಟುಹೋಗಿ ಜನರಿಗೆ ದೇವರ ಕಡೆ ತಿರುಗಿಕೊಳ್ಳಿರಿ ಎಂದು ಸಾರಿ ಹೇಳಿದರು.</verse>
				<verse number="13">ಅವರು ಅನೇಕರಿಂದ ದೆವ್ವಗಳನ್ನೋಡಿಸಿ, ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಅವರನ್ನು ಗುಣಪಡಿಸಿದರು.</verse>
				<verse number="14">ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿದ್ದರಿಂದ ಅರಸನಾದ ಹೆರೋದನಿಗೆ ಈ ವಿಷಯ ತಿಳಿಯಿತು. “ಈತನು ಸ್ನಾನಿಕನಾದ ಯೋಹಾನನೇ, ಸತ್ತವರೊಳಗಿಂದ ಅವನು ತಿರುಗಿ ಬದುಕಿ ಬಂದಿದ್ದಾನೆ. ಆದ್ದರಿಂದಲೇ ಈತನಲ್ಲಿ ಅದ್ಭುತಕಾರ್ಯಗಳನ್ನು ನಡೆಸುವ ಶಕ್ತಿಗಳಿವೆ,” ಎಂದು ಕೆಲವರು ಹೇಳುತ್ತಿದ್ದರು.</verse>
				<verse number="15">ಇನ್ನು ಕೆಲವರು, “ಈತನು ಎಲೀಯನು,” ಎಂದರು. ಮತ್ತೆ ಕೆಲವರು, “ಈತನು ಹಿಂದಿನ ಕಾಲದ ಪ್ರವಾದಿಗಳಂತೆ ಒಬ್ಬ ಪ್ರವಾದಿಯಾಗಿರಬೇಕು,” ಎಂದರು.</verse>
				<verse number="16">ಆದರೆ ಹೆರೋದನು ಇದನ್ನು ಕೇಳಿ, “ನಾನು ಶಿರಚ್ಛೇದನ ಮಾಡಿದ ಯೋಹಾನನೇ, ತಿರುಗಿ ಜೀವಂತವಾಗಿ ಬಂದಿದ್ದಾನೆ,” ಎಂದು ಹೇಳಿದನು.</verse>
				<verse number="17">ಏಕೆಂದರೆ, ಯೋಹಾನನನ್ನು ಬಂಧಿಸಿ ಸೆರೆಮನೆಗೆ ಹಾಕಬೇಕೆಂದು ಹೆರೋದನು ತಾನೇ ಕಳುಹಿಸಿದ್ದನು. ತನ್ನ ಸಹೋದರನಾದ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಮದುವೆ ಮಾಡಿಕೊಂಡದ್ದರಿಂದ ಅವನು ಹೀಗೆ ಮಾಡಿದ್ದನು.</verse>
				<verse number="18">ಏಕೆಂದರೆ ಯೋಹಾನನು ಹೆರೋದನಿಗೆ, “ನೀನು ನಿನ್ನ ಸಹೋದರನ ಹೆಂಡತಿಯನ್ನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಹೇಳುತ್ತಿದ್ದನು.</verse>
				<verse number="19">ಇದರಿಂದ ಹೆರೋದ್ಯಳು ಯೋಹಾನನ ಮೇಲೆ ಹಗೆಯಿಟ್ಟುಕೊಂಡು, ಅವನನ್ನು ಕೊಲ್ಲಿಸಬೇಕೆಂದಿದ್ದರೂ ಸಾಧ್ಯವಾಗಲಿಲ್ಲ.</verse>
				<verse number="20">ಏಕೆಂದರೆ, ಯೋಹಾನನು ನೀತಿವಂತನು ಮತ್ತು ಪವಿತ್ರ ಮನುಷ್ಯನು ಎಂದು ತಿಳಿದು ಹೆರೋದನು ಭಯಪಟ್ಟು ಅವನನ್ನು ಸುರಕ್ಷಿತವಾಗಿಟ್ಟಿದ್ದನು. ಯೋಹಾನನು ಹೇಳಿದ್ದನ್ನು ಹೆರೋದನು ಕೇಳಿದಾಗಲೆಲ್ಲಾ ಅವನಿಗೆ ಗಲಿಬಿಲಿಯಾಗುತ್ತಿತ್ತು. ಆದರೂ ಅವನ ಮಾತನ್ನು ಕೇಳಲು ಇಷ್ಟಪಡುತ್ತಿದ್ದನು.</verse>
				<verse number="21">ಕೊನೆಗೆ ಅನುಕೂಲವಾದ ಸಮಯ ಸಿಕ್ಕಿತು. ತನ್ನ ಜನ್ಮ ದಿನದಂದು ಹೆರೋದನು ತನ್ನ ಉನ್ನತ ಅಧಿಕಾರಿಗಳಿಗೆ, ಸೇನಾಧಿಪತಿಗಳಿಗೆ ಹಾಗೂ ಗಲಿಲಾಯದ ಪ್ರಮುಖರಿಗೆ ಔತಣವನ್ನು ಏರ್ಪಡಿಸಿದನು.</verse>
				<verse number="22">ಹೆರೋದ್ಯಳ ಮಗಳು ಒಳಗೆ ಬಂದು ನೃತ್ಯ ಮಾಡಿ, ಹೆರೋದನನ್ನೂ ಊಟಕ್ಕೆ ಬಂದ ಅವನ ಅತಿಥಿಗಳನ್ನೂ ಸಂತೋಷಪಡಿಸಿದಳು. ರಾಜನು ಆ ಹುಡುಗಿಗೆ, “ನಿನಗೆ ಏನು ಬೇಕಾದರೂ ಕೇಳು, ನಾನು ಕೊಡುತ್ತೇನೆ,” ಎಂದು ಹೇಳಿ,</verse>
				<verse number="23">“ನೀನೇನು ಕೇಳಿದರೂ ಕೊಡುತ್ತೇನೆ, ನನ್ನ ರಾಜ್ಯದಲ್ಲಿ ಅರ್ಧದಷ್ಟು ಕೇಳಿಕೊಂಡರೂ ಕೊಡುತ್ತೇನೆ,” ಎಂದು ಪ್ರಮಾಣ ಮಾಡಿದನು.</verse>
				<verse number="24">ಆಕೆ ತನ್ನ ತಾಯಿಯ ಬಳಿಗೆ ಹೋಗಿ, “ನಾನು ಏನನ್ನು ಕೇಳಲಿ?” ಎಂದು ಕೇಳಲು, ಆಕೆಯು, “ಸ್ನಾನಿಕನಾದ ಯೋಹಾನನ ತಲೆಯನ್ನು ಕೇಳು,” ಎಂದು ಉತ್ತರಕೊಟ್ಟಳು.</verse>
				<verse number="25">ಕೂಡಲೇ ಆ ಹುಡುಗಿ ಅವಸರವಾಗಿ ರಾಜನ ಮುಂದೆ ಬಂದು, “ನನಗೆ ಈಗಲೇ ಸ್ನಾನಿಕನಾದ ಯೋಹಾನನ ತಲೆಯನ್ನು ಒಂದು ತಟ್ಟೆಯಲ್ಲಿ ತರಿಸಿ ಕೊಡಬೇಕು,” ಎಂದು ಕೇಳಿಕೊಂಡಳು.</verse>
				<verse number="26">ಇದರಿಂದ ಅರಸನಿಗೆ ಬಹಳ ದುಃಖವಾದರೂ ತನ್ನ ಪ್ರಮಾಣದ ನಿಮಿತ್ತವಾಗಿ ಮತ್ತು ಭೋಜನಕ್ಕೆ ಬಂದ ಅತಿಥಿಗಳ ನಿಮಿತ್ತವಾಗಿ ಆಕೆಯ ಕೋರಿಕೆಯನ್ನು ನಿರಾಕರಿಸಲಿಲ್ಲ.</verse>
				<verse number="27">ಕೂಡಲೇ ಅರಸನು ಯೋಹಾನನ ತಲೆಯನ್ನು ತರಬೇಕೆಂದು ಒಬ್ಬ ಕಾವಲುಗಾರನಿಗೆ ಅಪ್ಪಣೆಕೊಟ್ಟು ಕಳುಹಿಸಿದನು. ಅವನು ಹೋಗಿ ಸೆರೆಮನೆಯಲ್ಲಿದ್ದ ಯೋಹಾನನ ಶಿರಚ್ಛೇದನ ಮಾಡಿದನು.</verse>
				<verse number="28">ಅವನ ತಲೆಯನ್ನು ತಟ್ಟೆಯಲ್ಲಿಟ್ಟುಕೊಂಡು ಬಂದು ಅದನ್ನು ಆ ಹುಡುಗಿಗೆ ಕೊಟ್ಟನು. ಆಕೆಯು ಅದನ್ನು ತನ್ನ ತಾಯಿಗೆ ಕೊಟ್ಟಳು.</verse>
				<verse number="29">ಇದನ್ನು ಕೇಳಿ ಯೋಹಾನನ ಶಿಷ್ಯರು ಬಂದು ಅವನ ಶವವನ್ನು ತೆಗೆದುಕೊಂಡುಹೋಗಿ ಸಮಾಧಿಯಲ್ಲಿ ಇಟ್ಟರು.</verse>
				<verse number="30">ಅಪೊಸ್ತಲರು ಹಿಂದಿರುಗಿ ಯೇಸುವಿನ ಬಳಿಗೆ ಬಂದು ತಾವು ಮಾಡಿದ್ದನ್ನೂ ಬೋಧಿಸಿದ ಎಲ್ಲವನ್ನೂ ಕುರಿತು ಅವರಿಗೆ ವರದಿಮಾಡಿದರು.</verse>
				<verse number="31">ಬಹಳ ಜನರು ಎಡೆಬಿಡದೆ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ. ಯೇಸು ಅವರಿಗೆ, “ನೀವು ಏಕಾಂತವಾದ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ,” ಎಂದು ಹೇಳಿದರು.</verse>
				<verse number="32">ಆಗ ಅವರು ದೋಣಿಯಲ್ಲಿ ಏಕಾಂತ ಸ್ಥಳಕ್ಕೆ ಹೋದರು.</verse>
				<verse number="33">ಆದರೆ ಅವರು ಹೋಗುವುದನ್ನು ಕಂಡ ಅನೇಕರು ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲ್ದಾರಿಯಲ್ಲಿ ಓಡಿ ಅವರಿಗಿಂತ ಮುಂಚೆ ಅಲ್ಲಿ ಸೇರಿದ್ದರು.</verse>
				<verse number="34">ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ಕಂಡು ಅವರ ಮೇಲೆ ಕನಿಕರಪಟ್ಟರು. ಏಕೆಂದರೆ ಅವರು ಕುರುಬನಿಲ್ಲದ ಕುರಿಗಳಂತಿದ್ದರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದರು.</verse>
				<verse number="35">ಅಷ್ಟರೊಳಗೆ ಸಂಜೆಯಾಯಿತು. ಶಿಷ್ಯರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನಪ್ರದೇಶ, ಈಗಲೇ ಹೊತ್ತು ಮೀರಿದೆ,</verse>
				<verse number="36">ಈ ಜನರು ಸುತ್ತಮುತ್ತಲಿನ ಹಳ್ಳಿಗಳಿಗೆ ಹೋಗಿ ತಿನ್ನುವುದಕ್ಕಾಗಿ ಏನಾದರೂ ಕೊಂಡುಕೊಳ್ಳುವಂತೆ ಇವರನ್ನು ಕಳುಹಿಸಿಬಿಡು,” ಎಂದು ಹೇಳಿದರು.</verse>
				<verse number="37">ಆದರೆ ಯೇಸು, “ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದರು. ಶಿಷ್ಯರು, “ನಾವು ಹೋಗಿ ಅವರಿಗೆ ಊಟಕ್ಕಾಗಿ ಆರು ತಿಂಗಳ ಸಂಬಳದಷ್ಟು ಖರ್ಚುಮಾಡಿ, ಆಹಾರವನ್ನು ಕೊಂಡುಕೊಂಡು ಬರಬೇಕೆ?” ಎಂದು ಕೇಳಿದರು.</verse>
				<verse number="38">ಯೇಸು ಅವರಿಗೆ, “ನಿಮ್ಮ ಬಳಿಯಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿರಿ,” ಎಂದು ಕೇಳಿದರು. ಅವರು ವಿಚಾರಿಸಿ, “ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ,” ಎಂದು ಉತ್ತರಕೊಟ್ಟರು.</verse>
				<verse number="39">ಆಮೇಲೆ ಯೇಸು ಹಸಿರು ಹುಲ್ಲಿನ ಮೇಲೆ ಸಾಲುಸಾಲಾಗಿ ಕುಳಿತುಕೊಳ್ಳುವಂತೆ ಜನರಿಗೆ ಆಜ್ಞಾಪಿಸಿದರು.</verse>
				<verse number="40">ಅವರು ನೂರರಂತೆ, ಐವತ್ತರಂತೆ ಸಾಲಾಗಿ ಕುಳಿತರು.</verse>
				<verse number="41">ಯೇಸು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ರೊಟ್ಟಿಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚುವಂತೆ ತಿಳಿಸಿದರು. ಅದರಂತೆಯೇ ಎರಡು ಮೀನುಗಳನ್ನು ಜನರೆಲ್ಲರಿಗೆ ಹಂಚಿಸಿದರು.</verse>
				<verse number="42">ಅವರೆಲ್ಲರೂ ತಿಂದು ತೃಪ್ತರಾದರು.</verse>
				<verse number="43">ಶಿಷ್ಯರು ಉಳಿದ ರೊಟ್ಟಿ ಮತ್ತು ಮೀನಿನ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿ ತುಂಬಿದವು.</verse>
				<verse number="44">ಊಟಮಾಡಿದವರಲ್ಲಿ ಐದು ಸಾವಿರ ಮಂದಿ ಗಂಡಸರಿದ್ದರು.</verse>
				<verse number="45">ಇದಾದ ಕೂಡಲೇ ಯೇಸು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ತಮ್ಮ ಶಿಷ್ಯರು ದೋಣಿಯನ್ನು ಹತ್ತಿ ತಮಗಿಂತ ಮುಂದಾಗಿ ಬೇತ್ಸಾಯಿದಕ್ಕೆ ಹೋಗಬೇಕೆಂದು ಆಜ್ಞಾಪಿಸಿದರು.</verse>
				<verse number="46">ಯೇಸು ಜನಸಮೂಹವನ್ನು ಕಳುಹಿಸಿದ ಮೇಲೆ ಪ್ರಾರ್ಥನೆಮಾಡಲು ಬೆಟ್ಟಕ್ಕೆ ಹೋದರು.</verse>
				<verse number="47">ಸಂಜೆಯಾದಾಗ, ದೋಣಿಯು ಸರೋವರದ ಮಧ್ಯದಲ್ಲಿತ್ತು. ಯೇಸು ದಡದಲ್ಲಿ ಒಬ್ಬರೇ ಇದ್ದರು.</verse>
				<verse number="48">ಎದುರುಗಾಳಿ ಬಲವಾಗಿ ಬೀಸುತ್ತಿದ್ದುದರಿಂದ ಶಿಷ್ಯರು ದೋಣಿಯನ್ನು ನಿಯಂತ್ರಿಸಲು ದಣಿದು ಹೋದದ್ದನ್ನು ಯೇಸು ಕಂಡು, ಮುಂಜಾನೆ ಸುಮಾರು ಮೂರು ಗಂಟೆಯಲ್ಲಿ ಅವರ ಬಳಿಗೆ ಸರೋವರದ ಮೇಲೆ ನಡೆಯುತ್ತಾ ಬಂದರು. ಯೇಸು ಅವರನ್ನು ದಾಟಿ ಹೋಗುವುದರಲ್ಲಿದ್ದರು.</verse>
				<verse number="49">ಆದರೆ ಯೇಸು ಸರೋವರದ ಮೇಲೆ ನಡೆಯುವುದನ್ನು ಕಂಡಾಗ, ಅವರು ಯೇಸುವನ್ನು ಭೂತವೆಂದು ಭಾವಿಸಿ, ಕಿರುಚಿದರು.</verse>
				<verse number="50">ಅವರೆಲ್ಲರೂ ಯೇಸುವನ್ನು ಕಂಡು ದಿಗಿಲುಗೊಂಡಿದ್ದರು. ಕೂಡಲೇ ಯೇಸು ಅವರಿಗೆ, “ಧೈರ್ಯವಾಗಿರಿ, ನಾನೇ! ಭಯಪಡಬೇಡಿರಿ,” ಎಂದರು.</verse>
				<verse number="51">ಆಮೇಲೆ ಯೇಸು ದೋಣಿಯನ್ನು ಹತ್ತಿ ಅವರ ಬಳಿಗೆ ಬರಲು ಗಾಳಿ ನಿಂತುಹೋಯಿತು. ಅವರು ಬಹು ಆಶ್ಚರ್ಯಗೊಂಡರು.</verse>
				<verse number="52">ರೊಟ್ಟಿಗಳ ಅದ್ಭುತವನ್ನು ಅವರು ಇನ್ನೂ ಗ್ರಹಿಸಿಕೊಂಡಿಲ್ಲವಾದ್ದರಿಂದ ಆಶ್ಚರ್ಯಚಕಿತರಾದರು. ಏಕೆಂದರೆ ಅವರ ಹೃದಯ ಕಠಿಣವಾಗಿತ್ತು.</verse>
				<verse number="53">ಅವರು ಸರೋವರವನ್ನು ದಾಟಿ, ಗೆನೆಜರೇತ್ ಸೀಮೆಯ ದಡ ಸೇರಿದರು.</verse>
				<verse number="54">ಅವರು ದೋಣಿಯಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುವಿನ ಗುರುತು ಹಿಡಿದರು.</verse>
				<verse number="55">ಅವರು ಆ ಪ್ರದೇಶದಲ್ಲೆಲ್ಲಾ ಓಡಾಡಿ, ಕಾಯಿಲೆಯಾಗಿದ್ದವರನ್ನು ಚಾಪೆಗಳ ಮೇಲೆ ಹಾಕಿಕೊಂಡು ಯೇಸು ಎಲ್ಲಿದ್ದಾರೆಂದು ಕೇಳಿದರೋ ಅಲ್ಲಿಗೆ ಬರಲಾರಂಭಿಸಿದರು.</verse>
				<verse number="56">ಯೇಸು ಹಳ್ಳಿ, ಪಟ್ಟಣ ಊರುಗಳಲ್ಲಿ ಎಲ್ಲೆಲ್ಲಿ ಹೋದರೋ ಅಲ್ಲಿ ಜನರು ರೋಗಿಗಳನ್ನು ತಂದು ಪೇಟೆಗಳಲ್ಲಿ ಇಟ್ಟು, ಯೇಸುವಿನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಅವರನ್ನು ಬೇಡಿಕೊಂಡರು. ಯೇಸುವನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು.</verse>
			</chapter>
			<chapter number="7">
				<verse number="1">ಯೆರೂಸಲೇಮಿನಿಂದ ಫರಿಸಾಯರು ಮತ್ತು ಕೆಲವು ನಿಯಮ ಬೋಧಕರು ಯೇಸುವಿನ ಬಳಿಗೆ ಬಂದರು.</verse>
				<verse number="2">ಆಗ ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಅಂದರೆ ಆಚಾರ ಪದ್ಧತಿಯಂತೆ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಕಂಡರು.</verse>
				<verse number="3">ಫರಿಸಾಯರು ಮತ್ತು ಎಲ್ಲಾ ಯೆಹೂದ್ಯರು ಆಚಾರ ಪದ್ಧತಿಯಂತೆ ತಮ್ಮ ಕೈಗಳನ್ನು ಸ್ವಚ್ಛವಾಗಿ ತೊಳೆಯದೆ ಊಟಮಾಡುವುದಿಲ್ಲ. ಹೀಗೆ ಅವರ ಪೂರ್ವಿಕರಿಂದ ಬಂದ ಸಂಪ್ರದಾಯವನ್ನು ಪಾಲಿಸುತ್ತಿದ್ದರು.</verse>
				<verse number="4">ಪೇಟೆಗೆ ಹೋಗಿ ಬಂದರೆ ಅವರು ಸ್ನಾನ ಮಾಡದೆ ಊಟಮಾಡುತ್ತಿರಲಿಲ್ಲ. ಮಾತ್ರವಲ್ಲದೆ ಲೋಟ, ಚೆಂಬು ಮತ್ತು ತಪ್ಪಲೆಗಳನ್ನು ಬೆಳಗಿ ತೊಳೆಯುವುದು ಮುಂತಾದ ಅನೇಕ ಶುದ್ಧಾಚಾರಗಳನ್ನು ಅವರು ಪಾಲಿಸುತ್ತಿದ್ದರು.</verse>
				<verse number="5">ಆದ್ದರಿಂದ ಫರಿಸಾಯರು ಮತ್ತು ನಿಯಮ ಬೋಧಕರು, “ನಿನ್ನ ಶಿಷ್ಯರು ಪೂರ್ವಿಕರ ಸಂಪ್ರದಾಯದ ಪ್ರಕಾರ ಏಕೆ ನಡೆಯುವುದಿಲ್ಲ? ಅವರು ಮೈಲಿಗೆಯಾದ ಕೈಗಳಿಂದ ಊಟಮಾಡುತ್ತಾರಲ್ಲಾ?” ಎಂದು ಯೇಸುವನ್ನು ಕೇಳಿದರು.</verse>
				<verse number="6">ಅದಕ್ಕೆ ಯೇಸು, “ಕಪಟಿಗಳೇ, ಯೆಶಾಯನು ನಿಮ್ಮ ವಿಷಯವಾಗಿ ಸರಿಯಾಗಿ ಪ್ರವಾದಿಸಿದ್ದಾನೆ,” ಅವನು ಬರೆದಿರುವಂತೆ: “ ‘ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ. ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.</verse>
				<verse number="7">ಮನುಷ್ಯರ ಆಜ್ಞೆಗಳನ್ನೇ ಉಪದೇಶಗಳನ್ನಾಗಿ ಬೋಧಿಸುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುತ್ತಾರೆ.’</verse>
				<verse number="8">ನೀವು ದೇವರ ಆಜ್ಞೆಯನ್ನು ತೊರೆದು, ಮನುಷ್ಯರ ಸಂಪ್ರದಾಯಗಳನ್ನು ಹಿಡಿದುಕೊಂಡಿದ್ದೀರಿ,” ಎಂದರು.</verse>
				<verse number="9">ಯೇಸು ಇನ್ನೂ ಅವರಿಗೆ, “ನಿಮ್ಮ ಸಂಪ್ರದಾಯಗಳನ್ನು ಪಾಲಿಸುವುದಕ್ಕಾಗಿ ಬಹು ಜಾಣತನದಿಂದ ದೇವರ ಆಜ್ಞೆಯನ್ನು ನಿರ್ಲಕ್ಷಿಸುತ್ತೀರಿ.</verse>
				<verse number="10">‘ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು,’ ಮತ್ತು ‘ತಂದೆತಾಯಿಗಳನ್ನು ದೂಷಿಸುವವನಿಗೆ ಮರಣದಂಡನೆ ಆಗಬೇಕು,’ ಎಂದು ಮೋಶೆ ಹೇಳಿದ್ದಾನೆ.</verse>
				<verse number="11">ಆದರೆ ನೀವು, ಯಾರಾದರೂ ತನ್ನ ತಂದೆಗೆ ಇಲ್ಲವೆ ತಾಯಿಗೆ, ನಾನು ನಿಮ್ಮ ಸಹಾಯಕ್ಕಾಗಿ ಇಟ್ಟಿದ್ದನ್ನು, ‘ದೇವರಿಗೆ ಕಾಣಿಕೆಯಾಗಿ ಕೊಟ್ಟಿದ್ದೇನೆ’ ಎಂದು ಹೇಳುವುದಾದರೆ,</verse>
				<verse number="12">ನೀವು ಅವನನ್ನು ತನ್ನ ತಂದೆತಾಯಿಗಳಿಗೆ ಯಾವ ಸಹಾಯವನ್ನು ಮಾಡುವುದಕ್ಕೂ ಅನುಮತಿಸುವುದಿಲ್ಲ.</verse>
				<verse number="13">ಹೀಗೆ ನೀವು ಮಾಡುತ್ತಾ ಬಂದಿರುವ ಸಂಪ್ರದಾಯಗಳ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ. ಇಂಥ ಕಾರ್ಯಗಳನ್ನು ಇನ್ನೂ ಎಷ್ಟೋ ಮಾಡುತ್ತೀರಿ,” ಎಂದು ಹೇಳಿದರು.</verse>
				<verse number="14">ಯೇಸು ಜನಸಮೂಹವನ್ನು ಪುನಃ ತಮ್ಮ ಬಳಿಗೆ ಕರೆದು, “ಎಲ್ಲರೂ ನನ್ನ ಮಾತುಗಳನ್ನು ಕೇಳಿರಿ, ಅರ್ಥಮಾಡಿಕೊಳ್ಳಿರಿ.</verse>
				<verse number="15">ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಅಶುದ್ಧ ಮಾಡುವುದಿಲ್ಲ. ಆದರೆ ಮನುಷ್ಯನೊಳಗಿಂದ ಹೊರಗೆ ಬರುವಂಥದ್ದು ಅವನನ್ನು ಅಶುದ್ಧ ಮಾಡುತ್ತದೆ.</verse>
				<verse number="16">ಯಾವನಿಗಾದರೂ ಕೇಳುವುದಕ್ಕೆ ಕಿವಿಯಿದ್ದರೆ ಕೇಳಲಿ,” ಎಂದು ಹೇಳಿದರು.</verse>
				<verse number="17">ಆಮೇಲೆ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಪ್ರವೇಶಿಸಿದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, ಆ ಸಾಮ್ಯದ ವಿಷಯವಾಗಿ ಪ್ರಶ್ನಿಸಿದರು.</verse>
				<verse number="18">ಯೇಸು ಅವರಿಗೆ, “ನೀವೂ ಇಷ್ಟು ಬುದ್ಧಿಹೀನರೋ? ಹೊರಗಿನಿಂದ ಮನುಷ್ಯನೊಳಗೆ ಹೋಗುವಂಥದ್ದು ಅವನನ್ನು ಅಶುದ್ಧ ಮಾಡುವುದಿಲ್ಲವೆಂಬುದು ನಿಮಗೆ ತಿಳಿಯದೋ?</verse>
				<verse number="19">ಏಕೆಂದರೆ ಅದು ಅವನ ಹೃದಯದೊಳಗೆ ಹೋಗದೆ ಹೊಟ್ಟೆಯನ್ನು ಸೇರಿ ಬಳಿಕ ವಿಸರ್ಜಿತವಾಗುತ್ತದೆ. ಹೀಗೆ ಹೇಳುವುದರ ಮೂಲಕ ಎಲ್ಲಾ ಆಹಾರ ಪದಾರ್ಥಗಳು ಶುದ್ಧವಾಗಿವೆ,” ಎಂದು ಯೇಸು ಸೂಚಿಸಿದರು.</verse>
				<verse number="20">ಯೇಸು ಮುಂದುವರಿದು, “ಆದರೆ ಮನುಷ್ಯನೊಳಗಿಂದ ಹೊರಡುವಂಥದ್ದು ಅವನನ್ನು ಅಶುದ್ಧ ಮಾಡುತ್ತವೆ.</verse>
				<verse number="21">ಮನುಷ್ಯನ ಹೃದಯದೊಳಗಿಂದ ಜಾರತ್ವ, ಕಳ್ಳತನ, ಕೊಲೆ,</verse>
				<verse number="22">ವ್ಯಭಿಚಾರ, ಲೋಭ, ದುಷ್ಟತ್ವ, ವಂಚನೆ, ಅಶ್ಲೀಲತೆ, ಅಸೂಯೆ, ನಿಂದೆ, ಗರ್ವ ಮತ್ತು ಮೂರ್ಖತನ ಮುಂತಾದ ದುರಾಲೋಚನೆಗಳು ಹೊರಡುತ್ತವೆ.</verse>
				<verse number="23">ಈ ಎಲ್ಲಾ ಕೇಡುಗಳು ಮನುಷ್ಯನ ಒಳಗಿಂದ ಹೊರಟು ಅವನನ್ನು ಅಶುದ್ಧ ಮಾಡುತ್ತವೆ,” ಎಂದರು.</verse>
				<verse number="24">ಯೇಸು ಆ ಸ್ಥಳವನ್ನು ಬಿಟ್ಟು ಟೈರ್ ಪಟ್ಟಣದ ಸಮೀಪವಿದ್ದ ಪ್ರದೇಶಕ್ಕೆ ಹೋದರು. ಯೇಸು ಒಂದು ಮನೆಯೊಳಗೆ ಹೋದಾಗ, ಅದು ಯಾರಿಗೂ ತಿಳಿಯಬಾರದೆಂದು ಬಯಸಿದರು. ಆದರೂ ಅವರು ಗುಟ್ಟಾಗಿರಲು ಸಾಧ್ಯವಾಗಲಿಲ್ಲ.</verse>
				<verse number="25">ಹೀಗೆ ಯೇಸುವಿನ ವಿಷಯ ತಿಳಿದ ಕೂಡಲೇ, ಅಶುದ್ಧಾತ್ಮಪೀಡಿತಳಾಗಿದ್ದ ಒಬ್ಬ ಚಿಕ್ಕ ಹುಡುಗಿಯ ತಾಯಿ ಬಂದು ಅವರ ಪಾದಕ್ಕೆ ಬಿದ್ದಳು.</verse>
				<verse number="26">ಆಕೆ, ಸಿರಿಯದ ಫೊಯಿನಿಕೆಯಲ್ಲಿ ಹುಟ್ಟಿದ ಗ್ರೀಕಳಾಗಿದ್ದಳು. ತನ್ನ ಮಗಳಿಗೆ ಹಿಡಿದಿದ್ದ ದೆವ್ವವನ್ನು ಓಡಿಸಬೇಕೆಂದು ಆಕೆ ಯೇಸುವನ್ನು ಬೇಡಿಕೊಂಡಳು.</verse>
				<verse number="27">ಯೇಸು ಆಕೆಗೆ, “ಮೊದಲು ಮಕ್ಕಳು ತಮಗೆ ಬೇಕಾದದ್ದನ್ನು ತಿಂದು ತೃಪ್ತಿಗೊಳ್ಳಲಿ, ಏಕೆಂದರೆ ಮಕ್ಕಳು ತಿನ್ನುವ ರೊಟ್ಟಿಯನ್ನು ನಾಯಿಮರಿಗಳಿಗೆ ಹಾಕುವುದು ಸರಿಯಲ್ಲ,” ಎಂದರು.</verse>
				<verse number="28">ಅದಕ್ಕೆ ಆಕೆಯು ಯೇಸುವಿಗೆ, “ಹೌದು ಸ್ವಾಮೀ, ಆದರೆ ಮೇಜಿನ ಕೆಳಗಿರುವ ನಾಯಿಮರಿಗಳು ಮಕ್ಕಳ ಕೈಯಿಂದ ಕೆಳಗೆ ಬೀಳುವ ರೊಟ್ಟಿತುಂಡುಗಳನ್ನು ತಿನ್ನುತ್ತವಲ್ಲಾ?” ಎಂದು ಉತ್ತರಕೊಟ್ಟಳು.</verse>
				<verse number="29">ಆಗ ಯೇಸು ಆಕೆಗೆ, “ನೀನು ಕೊಟ್ಟಿರುವ ಈ ಉತ್ತರದ ನಿಮಿತ್ತ ಮನೆಗೆ ಹಿಂದಿರುಗು, ದೆವ್ವವು ನಿನ್ನ ಮಗಳನ್ನು ಬಿಟ್ಟುಹೋಗಿದೆ,” ಎಂದರು.</verse>
				<verse number="30">ಆಕೆ ಮನೆಗೆ ಹೋದಾಗ, ದೆವ್ವ ಅವಳ ಮಗಳನ್ನು ಬಿಟ್ಟುಹೋಗಿತ್ತು ಮತ್ತು ಮಗಳು ಹಾಸಿಗೆಯ ಮೇಲೆ ಮಲಗಿರುವುದನ್ನು ಕಂಡಳು.</verse>
				<verse number="31">ಆಮೇಲೆ ಯೇಸು ಟೈರ್ ಪಟ್ಟಣದ ಸಮೀಪವಿದ್ದ ಪ್ರದೇಶದಿಂದ ಹೊರಟು ಸೀದೋನಿನ ಮಾರ್ಗವಾಗಿ ಗಲಿಲಾಯ ಸರೋವರ ತೀರವನ್ನು ಹಾದು ದೆಕಪೊಲಿ ಪ್ರದೇಶಕ್ಕೆ ಬಂದರು.</verse>
				<verse number="32">ಅಲ್ಲಿ ಕೆಲವರು ಮಾತನಾಡಲಾಗದ ಒಬ್ಬ ಕಿವುಡನನ್ನು ಕರೆದುಕೊಂಡು ಬಂದು ಅವನ ಮೇಲೆ ಕೈಯಿಡಬೇಕೆಂದು ಯೇಸುವನ್ನು ಬೇಡಿಕೊಂಡರು.</verse>
				<verse number="33">ಯೇಸು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ ತಮ್ಮ ಬೆರಳುಗಳನ್ನು ಅವನ ಕಿವಿಯೊಳಗಿಟ್ಟು ಅನಂತರ ಉಗುಳಿ, ಅವನ ನಾಲಿಗೆಯನ್ನು ಮುಟ್ಟಿದರು.</verse>
				<verse number="34">ಯೇಸು ಸ್ವರ್ಗದ ಕಡೆಗೆ ನೋಡಿ, ದೀರ್ಘವಾಗಿ ನಿಟ್ಟುಸಿರುಬಿಟ್ಟು ಅವನಿಗೆ “ಎಪ್ಫಥಾ!” ಎಂದರು. “ತೆರೆಯಲಿ!” ಎಂಬುದು ಅದರ ಅರಮೀಯ ಅರ್ಥ.</verse>
				<verse number="35">ಕೂಡಲೇ ಅವನ ಕಿವಿಗಳು ತೆರೆದವು; ಅವನ ನಾಲಿಗೆಯು ಸಡಿಲವಾಯಿತು. ಅವನು ಸ್ಪಷ್ಟವಾಗಿ ಮಾತನಾಡಲಾರಂಭಿಸಿದನು.</verse>
				<verse number="36">ಯಾವ ಮನುಷ್ಯನಿಗೂ ಇದನ್ನು ಹೇಳಬಾರದೆಂದು ಯೇಸು ಅವರಿಗೆ ಖಂಡಿತವಾಗಿ ಹೇಳಿದರು. ಆದರೆ ಎಷ್ಟು ಖಂಡಿತವಾಗಿ ಹೇಳಿದರೂ ಅವರು ಅದನ್ನು ಮತ್ತಷ್ಟೂ ಹೆಚ್ಚಾಗಿ ಪ್ರಚಾರಮಾಡಿದರು.</verse>
				<verse number="37">ಜನರು ಅತ್ಯಂತ ಆಶ್ಚರ್ಯಪಟ್ಟು, “ಯೇಸು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ. ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರೆ,” ಎಂದುಕೊಳ್ಳುತ್ತಿದ್ದರು.</verse>
			</chapter>
			<chapter number="8">
				<verse number="1">ಆ ದಿವಸಗಳಲ್ಲಿ ದೊಡ್ಡ ಜನಸಮೂಹ ಕೂಡಿಬಂದಿತು. ಅವರಿಗೆ ಊಟಕ್ಕೆ ಏನೂ ಇಲ್ಲದ್ದರಿಂದ ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು,</verse>
				<verse number="2">“ನಾನು ಈ ಜನಸಮೂಹವನ್ನು ನೋಡಿ ಕನಿಕರಪಡುತ್ತೇನೆ. ಏಕೆಂದರೆ ಮೂರು ದಿನಗಳಿಂದ ಇವರು ನನ್ನೊಂದಿಗಿದ್ದಾರೆ. ಇವರಿಗೆ ಊಟಕ್ಕೆ ಏನೂ ಇಲ್ಲ.</verse>
				<verse number="3">ನಾನು ಇವರನ್ನು ಹಸಿವೆಯಿಂದ ತಮ್ಮ ಮನೆಗಳಿಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಹೋಗುವರು. ಇವರಲ್ಲಿ ಕೆಲವರು ದೂರದಿಂದ ಬಂದಿದ್ದಾರೆ,” ಎಂದರು.</verse>
				<verse number="4">ಅದಕ್ಕೆ ಶಿಷ್ಯರು ಯೇಸುವಿಗೆ, “ಈ ನಿರ್ಜನ ಪ್ರದೇಶದಲ್ಲಿ ಈ ಜನರನ್ನು ತೃಪ್ತಿಪಡಿಸಲು ಸಾಕಷ್ಟು ರೊಟ್ಟಿಯನ್ನು ಎಲ್ಲಿಂದ ತರುವುದು?” ಎಂದರು.</verse>
				<verse number="5">ಯೇಸು ಅವರಿಗೆ, “ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದ್ದಕ್ಕೆ ಶಿಷ್ಯರು, “ಏಳು ರೊಟ್ಟಿಗಳಿವೆ,” ಎಂದರು.</verse>
				<verse number="6">ಆಗ ಯೇಸು ಜನಸಮೂಹವು ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ಮುರಿದು ಜನಸಮೂಹಕ್ಕೆ ಹಂಚಲು ತಮ್ಮ ಶಿಷ್ಯರಿಗೆ ಕೊಟ್ಟರು. ಅವರು ಜನಸಮೂಹಕ್ಕೆ ಹಂಚಿದರು.</verse>
				<verse number="7">ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು. ಯೇಸು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚುವಂತೆ ಆಜ್ಞಾಪಿಸಿದರು.</verse>
				<verse number="8">ಜನರು ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಒಟ್ಟುಗೂಡಿಸಿದಾಗ ಏಳು ಬುಟ್ಟಿಗಳು ತುಂಬಿದವು.</verse>
				<verse number="9">ಊಟಮಾಡಿದವರು ಸುಮಾರು ನಾಲ್ಕು ಸಾವಿರ ಮಂದಿ. ಯೇಸು ಅವರನ್ನು ಕಳುಹಿಸಿದ ನಂತರ,</verse>
				<verse number="10">ತಮ್ಮ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿ ದಲ್ಮನೂಥ ಎಂಬ ಪ್ರದೇಶಕ್ಕೆ ಹೋದರು.</verse>
				<verse number="11">ಫರಿಸಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಪರಲೋಕದಿಂದ ತಮಗೆ ಒಂದು ಸೂಚಕಕಾರ್ಯವನ್ನು ಮಾಡಬೇಕೆಂದು ಕೇಳಿ, ಅವರೊಂದಿಗೆ ತರ್ಕಿಸುವುದಕ್ಕೆ ಆರಂಭಿಸಿದರು.</verse>
				<verse number="12">ಯೇಸು ತಮ್ಮ ಆತ್ಮದಲ್ಲಿ ನೊಂದುಕೊಂಡು, “ಈ ಸಂತತಿಯು ಸೂಚಕಕಾರ್ಯವನ್ನು ಹುಡುಕುವುದು ಏಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲಾಗುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.</verse>
				<verse number="13">ಯೇಸು ಅವರನ್ನು ಬಿಟ್ಟು ತಿರುಗಿ ದೋಣಿಯನ್ನು ಹತ್ತಿ ಆಚೆದಡಕ್ಕೆ ಹೊರಟು ಹೋದರು.</verse>
				<verse number="14">ಶಿಷ್ಯರು ರೊಟ್ಟಿಬುತ್ತಿಯನ್ನು ತೆಗೆದುಕೊಳ್ಳುವುದಕ್ಕೆ ಮರೆತಿದ್ದರು. ಇದಲ್ಲದೆ ದೋಣಿಯಲ್ಲಿ ಅವರಿಗೆ ಒಂದೇ ಒಂದು ರೊಟ್ಟಿ ಇತ್ತು.</verse>
				<verse number="15">ಯೇಸು ಅವರಿಗೆ, “ಫರಿಸಾಯರ ಹುಳಿಹಿಟ್ಟಿನ ವಿಷಯದಲ್ಲಿಯೂ ಹೆರೋದನ ವಿಷಯದಲ್ಲಿಯೂ ನೀವು ಎಚ್ಚರಿಕೆಯಿಂದಿರಿ,” ಎಂದು ಖಂಡಿತವಾಗಿ ಹೇಳಿದರು.</verse>
				<verse number="16">ಅವರು ತಮ್ಮೊಳಗೆ, “ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು,” ಎಂದು ಚರ್ಚಿಸಿಕೊಂಡರು.</verse>
				<verse number="17">ಯೇಸು ಅವರು ಮಾತನಾಡಿದ್ದನ್ನು ತಿಳಿದುಕೊಂಡು ಅವರಿಗೆ, “ನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಏಕೆ ಚರ್ಚಿಸಿಕೊಳ್ಳುತ್ತೀರಿ? ನೀವು ಇನ್ನೂ ಕಾಣದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣ ಮಾಡಿಕೊಂಡಿದ್ದೀರೋ?</verse>
				<verse number="18">ಕಣ್ಣುಗಳಿದ್ದೂ ನೀವು ಕಾಣುವುದಿಲ್ಲವೋ? ಕಿವಿಗಳಿದ್ದೂ ನೀವು ಕೇಳುವುದಿಲ್ಲವೋ?</verse>
				<verse number="19">ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಬುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಕೂಡಿಸಿದಿರಿ ಎಂದು ನಿಮಗೆ ನೆನಪಿಲ್ಲವೇ?” ಎಂದು ಕೇಳಲು ಅವರು ಯೇಸುವಿಗೆ, “ಹನ್ನೆರಡು ಬುಟ್ಟಿಗಳು,” ಎಂದರು.</verse>
				<verse number="20">“ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಬುಟ್ಟಿಗಳ ತುಂಬ ತುಂಡುಗಳನ್ನು ಕೂಡಿಸಿದಿರಿ?” ಎಂದು ಕೇಳಲು ಅವರು, “ಏಳು ಬುಟ್ಟಿಗಳು,” ಎಂದರು.</verse>
				<verse number="21">ಯೇಸು ಅವರಿಗೆ, “ಹಾಗಾದರೆ ನೀವು ಇನ್ನೂ ಗ್ರಹಿಸದೆ ಇರುವುದು ಹೇಗೆ?” ಎಂದು ಕೇಳಿದರು.</verse>
				<verse number="22">ಯೇಸು ಬೇತ್ಸಾಯಿದಕ್ಕೆ ಬಂದಾಗ, ಕೆಲವರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ತಂದು ಅವನನ್ನು ಮುಟ್ಟಬೇಕೆಂದು ಬೇಡಿಕೊಂಡರು.</verse>
				<verse number="23">ಯೇಸು ಆ ಕುರುಡನ ಕೈಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ, ಅವನ ಕಣ್ಣುಗಳ ಮೇಲೆ ಉಗುಳಿ ಅವನ ಮೇಲೆ ತಮ್ಮ ಕೈಯಿಟ್ಟು, “ನಿನಗೆ ಏನಾದರೂ ಕಾಣುತ್ತದೋ?” ಎಂದು ಅವನನ್ನು ಕೇಳಿದರು.</verse>
				<verse number="24">ಅವನು ಮೇಲಕ್ಕೆ ನೋಡಿ, “ಮನುಷ್ಯರು ಮರಗಳ ಹಾಗೆ ಕಾಣುತ್ತಿದ್ದಾರೆ. ಆದರೂ ಅವರು ನಡೆದಾಡುವುದನ್ನು ನೋಡುತ್ತಿದ್ದೇನೆ,” ಎಂದನು.</verse>
				<verse number="25">ತರುವಾಯ ಯೇಸು ತಿರುಗಿ ಅವನ ಕಣ್ಣುಗಳ ಮೇಲೆ ತಮ್ಮ ಕೈಗಳನ್ನಿಟ್ಟರು. ಆಗ ಅವನು ಗುಣಹೊಂದಿದವನಾಗಿ ಎಲ್ಲವನ್ನೂ ಬಹುಸ್ಪಷ್ಟವಾಗಿ ಕಂಡನು.</verse>
				<verse number="26">ಯೇಸು ಅವನಿಗೆ, “ನೀನು ಊರೊಳಕ್ಕೆ ಹೋಗಬೇಡ,” ಎಂದು ಹೇಳಿ ಅವನನ್ನು ಮನೆಗೆ ಕಳುಹಿಸಿಬಿಟ್ಟರು.</verse>
				<verse number="27">ಯೇಸುವೂ ಅವರ ಶಿಷ್ಯರೂ ಕೈಸರೈಯ ಫಿಲಿಪ್ಪಿ ಊರುಗಳಿಗೆ ಹೋದರು. ಯೇಸು ದಾರಿಯಲ್ಲಿ ತಮ್ಮ ಶಿಷ್ಯರಿಗೆ, “ನಾನು ಯಾರೆಂದು ಜನರು ಹೇಳುತ್ತಾರೆ?” ಎಂದು ಕೇಳಿದರು.</verse>
				<verse number="28">ಅವರು, “ಕೆಲವರು ಸ್ನಾನಿಕನಾದ ಯೋಹಾನನು, ಮತ್ತೆ ಕೆಲವರು ಎಲೀಯನು, ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಎನ್ನುತ್ತಾರೆ,” ಎಂದು ಹೇಳಿದರು.</verse>
				<verse number="29">ಅದಕ್ಕೆ ಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಲು, ಪೇತ್ರನು ಯೇಸುವಿಗೆ, “ನೀನು ಕ್ರಿಸ್ತನೇ,” ಎಂದನು.</verse>
				<verse number="30">ತಮ್ಮ ವಿಷಯವಾಗಿ ಅವರು ಯಾರಿಗೂ ಹೇಳಬಾರದೆಂದು ಯೇಸು ಅವರಿಗೆ ಖಂಡಿತವಾಗಿ ಹೇಳಿದರು.</verse>
				<verse number="31">ಮನುಷ್ಯಪುತ್ರನಾದ ನಾನು ಅನೇಕ ಬಾಧೆಗಳನ್ನು ಅನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ತಿರಸ್ಕೃತನಾಗಿ ಕೊಲೆಗೆ ಗುರಿಯಾಗಿ ಮೂರು ದಿವಸಗಳಾದ ಮೇಲೆ ಜೀವಂತವಾಗಿ ಎದ್ದು ಬರುವುದು ಅವಶ್ಯ ಎಂದು ಅವರಿಗೆ ಬೋಧಿಸಲಾರಂಭಿಸಿದರು.</verse>
				<verse number="32">ಯೇಸು ಆ ಮಾತನ್ನು ಸ್ಪಷ್ಟವಾಗಿ ಹೇಳಿದ್ದರಿಂದ ಪೇತ್ರನು ಅವರನ್ನು ಪ್ರತ್ಯೇಕವಾಗಿ ಕರೆದು ಯೇಸುವನ್ನು ಗದರಿಸಲಾರಂಭಿಸಿದನು.</verse>
				<verse number="33">ಆದರೆ ಯೇಸು ತಿರುಗಿ ತಮ್ಮ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ, “ಸೈತಾನನೇ, ನನ್ನಿಂದ ತೊಲಗಿಹೋಗು! ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದು ಹೇಳಿದರು.</verse>
				<verse number="34">ಯೇಸು ಜನರನ್ನೂ ಶಿಷ್ಯರನ್ನೂ ತಮ್ಮ ಬಳಿಗೆ ಕರೆದು ಅವರಿಗೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.</verse>
				<verse number="35">ತಮ್ಮ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವರು ಅದನ್ನು ಕಳೆದುಕೊಳ್ಳುವರು. ಆದರೆ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಯಾರು ತಮ್ಮ ಪ್ರಾಣವನ್ನು ಕಳೆದುಕೊಳ್ಳುವರೋ ಅವರು ಅದನ್ನು ಉಳಿಸಿಕೊಳ್ಳುವರು.</verse>
				<verse number="36">ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತಮ್ಮ ಸ್ವಂತ ಆತ್ಮವನ್ನೇ ನಷ್ಟಪಡಿಸಿಕೊಂಡರೆ ಅವರಿಗೆ ಲಾಭವೇನು?</verse>
				<verse number="37">ಇಲ್ಲವೆ ತಮ್ಮ ಆತ್ಮಕ್ಕೆ ಬದಲಾಗಿ ಏನು ಕೊಡುವರು?</verse>
				<verse number="38">ಯಾರಾದರೂ ವ್ಯಭಿಚಾರದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯವಾಗಿ ನಾಚಿಕೊಳ್ಳುವರೋ ಅವರ ವಿಷಯದಲ್ಲಿ ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿಕೊಳ್ಳುವೆನು,” ಎಂದು ಹೇಳಿದರು.</verse>
			</chapter>
			<chapter number="9">
				<verse number="1">ಅನಂತರ ಯೇಸು ಅವರಿಗೆ, “ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವು ಶಕ್ತಿಯೊಂದಿಗೆ ಬರುವುದನ್ನು ಕಾಣುವವರೆಗೆ ಮರಣದ ಅನುಭವ ಹೊಂದುವುದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.</verse>
				<verse number="2">ಯೇಸು ಆರು ದಿನಗಳಾದ ಮೇಲೆ ಪೇತ್ರ, ಯಾಕೋಬ, ಯೋಹಾನನನ್ನೂ ತಮ್ಮೊಂದಿಗೆ ಕರೆದುಕೊಂಡು ಏಕಾಂತವಾಗಿ ಒಂದು ಎತ್ತರವಾದ ಬೆಟ್ಟಕ್ಕೆ ಹೋದರು. ಅಲ್ಲಿ ಯೇಸು ಅವರ ಮುಂದೆ ರೂಪಾಂತರಗೊಂಡರು.</verse>
				<verse number="3">ಯೇಸುವಿನ ಉಡುಪು ಭೂಮಿಯ ಮೇಲಿರುವ ಯಾವ ಅಗಸನೂ ಬಿಳುಪು ಮಾಡಲಾರದಷ್ಟು ಉಜ್ವಲವಾಗಿ ಹೊಳೆಯುತ್ತಿತ್ತು.</verse>
				<verse number="4">ಆಗ ಅಲ್ಲಿ ಎಲೀಯನು ಮತ್ತು ಮೋಶೆಯು ಯೇಸುವಿನೊಂದಿಗೆ ಮಾತನಾಡುತ್ತಿರುವುದನ್ನು ಅವರು ಕಂಡರು.</verse>
				<verse number="5">ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ನಮಗೆ ಒಳ್ಳೆಯದು. ನಿನಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದರಂತೆ ಮೂರು ಗುಡಾರಗಳನ್ನು ನಾವು ಕಟ್ಟುವೆವು,” ಎಂದು ಹೇಳಿದನು.</verse>
				<verse number="6">ತಾನು ಏನು ಮಾತನಾಡಬೇಕೋ ಅವನಿಗೆ ತಿಳಿದಿರಲಿಲ್ಲ. ಏಕೆಂದರೆ ಅವರು ಬಹಳವಾಗಿ ಹೆದರಿದ್ದರು.</verse>
				<verse number="7">ಆಗ ಅಲ್ಲಿ ಮೋಡವು ಅವರ ಮೇಲೆ ಕವಿದುಕೊಂಡಿತು. ಮೋಡದೊಳಗಿಂದ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂಬ ಧ್ವನಿಯು ಬಂದಿತು.</verse>
				<verse number="8">ಕೂಡಲೇ ಅವರು ಸುತ್ತಲೂ ನೋಡಲಾಗಿ ತಮ್ಮೊಂದಿಗೆ ಯೇಸುವನ್ನೇ ಹೊರತು ಇನ್ನಾರನ್ನೂ ಕಾಣಲಿಲ್ಲ.</verse>
				<verse number="9">ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಮನುಷ್ಯಪುತ್ರರಾದ ತಾವು ಸತ್ತವರೊಳಗಿಂದ ಎದ್ದು ಬರುವವರೆಗೆ ಅವರು ಕಂಡದ್ದನ್ನು ಯಾರಿಗೂ ಹೇಳಬಾರದೆಂದು ಯೇಸು ಆಜ್ಞಾಪಿಸಿದರು.</verse>
				<verse number="10">“ಸತ್ತವರೊಳಗಿಂದ ಎದ್ದು ಬರುವುದೆಂದರೆ ಏನು?” ಅವರು ಒಬ್ಬರಿಗೊಬ್ಬರು ಆ ಮಾತನ್ನು ತಮ್ಮತಮ್ಮೊಳಗೆ ಚರ್ಚಿಸಿಕೊಂಡರು.</verse>
				<verse number="11">ಇದಲ್ಲದೆ ಅವರು ಯೇಸುವಿಗೆ, “ಎಲೀಯನು ಮೊದಲು ಬರುವುದು ಅಗತ್ಯವೆಂದು ನಿಯಮ ಬೋಧಕರು ಏಕೆ ಹೇಳುತ್ತಾರೆ?” ಎಂದು ಕೇಳಿದರು.</verse>
				<verse number="12">ಯೇಸು ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವನ್ನೂ ಸರಿಪಡಿಸುತ್ತಾನೆಂಬ ಮಾತು ನಿಜವೇ. ಆದರೆ ಮನುಷ್ಯಪುತ್ರನಾದ ನಾನು ಬಹಳ ಯಾತನೆಗಳನ್ನು ಅನುಭವಿಸಿ ತಿರಸ್ಕರಿಸಲಾಗಬೇಕೆಂದು ನನ್ನ ವಿಷಯವಾಗಿ ಬರೆದಿರುವುದು ಹೇಗೆ?</verse>
				<verse number="13">ಆದರೆ, ಎಲೀಯನು ನಿಜವಾಗಿಯೂ ಬಂದನು. ಅವನ ವಿಷಯವಾಗಿ ಬರೆದಿರುವಂತೆ ಜನರು ತಮ್ಮ ಮನಸ್ಸಿಗೆ ಬಂದ ಹಾಗೆ ಅವನಿಗೆ ಮಾಡಿದರು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.</verse>
				<verse number="14">ಯೇಸು ತಮ್ಮ ಶಿಷ್ಯರ ಬಳಿಗೆ ಬಂದಾಗ, ಅವರ ಸುತ್ತಲು ದೊಡ್ಡ ಸಮೂಹವನ್ನೂ ನಿಯಮ ಬೋಧಕರು ಅವರೊಂದಿಗೆ ತರ್ಕಿಸುತ್ತಿರುವುದನ್ನೂ ಕಂಡರು.</verse>
				<verse number="15">ಜನರೆಲ್ಲರೂ ಯೇಸುವನ್ನು ಕಂಡಕೂಡಲೇ, ಬಹು ಆಶ್ಚರ್ಯಪಟ್ಟು ಓಡುತ್ತಾ ಬಂದು ಯೇಸುವನ್ನು ವಂದಿಸಿದರು.</verse>
				<verse number="16">ಆಗ ಯೇಸು ಅವರಿಗೆ, “ಅವರೊಂದಿಗೆ ನೀವು ಏನು ತರ್ಕಮಾಡುತ್ತಿದ್ದಿರಿ?” ಎಂದು ಕೇಳಿದರು.</verse>
				<verse number="17">ಸಮೂಹದಲ್ಲಿದ್ದ ಒಬ್ಬನು, “ಬೋಧಕರೇ, ಮೂಕದೆವ್ವ ಹಿಡಿದ ನನ್ನ ಮಗನನ್ನು ನಿನ್ನ ಬಳಿಗೆ ತೆಗೆದುಕೊಂಡು ಬಂದೆನು.</verse>
				<verse number="18">ಅಶುದ್ಧಾತ್ಮವು ಅವನನ್ನು ಹಿಡಿದುಕೊಂಡಾಗಲೆಲ್ಲಾ ಅವನನ್ನು ಒದ್ದಾಡಿಸುತ್ತದೆ. ಅವನು ನೊರೆ ಕಾರುತ್ತಾ ತನ್ನ ಹಲ್ಲು ಕಡಿದು ಸೆಟೆದುಕೊಂಡು ಬೀಳುತ್ತಾನೆ. ಅದನ್ನು ಬಿಡಿಸಬೇಕೆಂದು ನಾನು ನಿನ್ನ ಶಿಷ್ಯರಿಗೆ ಹೇಳಿದೆನು. ಆದರೆ ಅದು ಅವರಿಂದ ಆಗಲಿಲ್ಲ,” ಎಂದು ಹೇಳಿದನು.</verse>
				<verse number="19">ಆಗ ಯೇಸು ಅವರಿಗೆ, “ವಿಶ್ವಾಸವಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.</verse>
				<verse number="20">ಅವರು ಅವನನ್ನು ಯೇಸುವಿನ ಬಳಿಗೆ ತಂದರು. ಯೇಸುವನ್ನು ನೋಡಿದ ತಕ್ಷಣವೇ ಆ ದೆವ್ವವು ಆ ಬಾಲಕನನ್ನು ಒದ್ದಾಡಿಸಿದ್ದರಿಂದ ಅವನು ನೆಲಕ್ಕೆ ಬಿದ್ದು ನೊರೆ ಕಾರುತ್ತಾ ಹೊರಳಾಡಿದನು.</verse>
				<verse number="21">ಯೇಸು ಅವನ ತಂದೆಗೆ, “ಇದು ಇವನನ್ನು ಹಿಡಿದು ಎಷ್ಟು ಕಾಲವಾಯಿತು?” ಎಂದು ಕೇಳಲು, ಅವನು, “ಬಾಲ್ಯದಿಂದಲೇ ಹೀಗಿದೆ.</verse>
				<verse number="22">ಅಶುದ್ಧಾತ್ಮವು ಅವನನ್ನು ಕೊಲ್ಲಬೇಕೆಂದು ಅನೇಕ ಸಾರಿ ಬೆಂಕಿಯೊಳಗೂ ನೀರಿನೊಳಗೂ ಹಾಕಿತು. ಆದರೆ ನೀನು ಏನಾದರೂ ಮಾಡಲು ಸಾಧ್ಯವಿದ್ದರೆ, ಕನಿಕರಿಸಿ ನಮಗೆ ಸಹಾಯಮಾಡು,” ಎಂದನು.</verse>
				<verse number="23">ಆಗ ಯೇಸು ಅವನಿಗೆ, “ನಿನಗೆ ಸಾಧ್ಯವಿದ್ದರೆ ಎನ್ನುತ್ತೀಯಲ್ಲಾ? ನಂಬುವವನಿಗೆ ಎಲ್ಲವೂ ಸಾಧ್ಯ,” ಎಂದು ಹೇಳಿದರು.</verse>
				<verse number="24">ತಕ್ಷಣವೇ ಬಾಲಕನ ತಂದೆಯು, “ನಾನು ನಂಬುತ್ತೇನೆ. ನನಗೆ ಅಪನಂಬಿಕೆಯಿದೆ ನನಗೆ ಸಹಾಯಮಾಡು,” ಎಂದು ಮೊರೆಯಿಟ್ಟನು.</verse>
				<verse number="25">ಜನರು ಕೂಡಿಕೊಂಡು ಓಡಿಬರುವುದನ್ನು ಯೇಸು ಕಂಡು, ಆ ಅಶುದ್ಧಾತ್ಮವನ್ನು ಗದರಿಸಿ ಅದಕ್ಕೆ, “ಮೂಕ ಮತ್ತು ಕಿವುಡಾದ ಆತ್ಮವೇ, ನೀನು ಅವನೊಳಗಿಂದ ಹೊರಗೆ ಬಾ, ಇನ್ನೆಂದಿಗೂ ಅವನೊಳಗೆ ಸೇರಬಾರದೆಂದು ನಾನು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.</verse>
				<verse number="26">ಆಗ ಅಶುದ್ಧಾತ್ಮವು ಕೂಗಿ ಬಾಲಕನನ್ನು ಕ್ರೂರವಾಗಿ ಒದ್ದಾಡಿಸಿ ಅವನೊಳಗಿಂದ ಹೊರಗೆ ಬಂದಿತು. ಅವನು ಸತ್ತವನ ಹಾಗೆ ಬಿದ್ದಿದ್ದರಿಂದ ಅನೇಕರು, “ಅವನು ಸತ್ತಿದ್ದಾನೆ,” ಎಂದರು.</verse>
				<verse number="27">ಆದರೆ ಯೇಸು ಕೈಹಿಡಿದು ಅವನನ್ನು ಮೇಲಕ್ಕೆತ್ತಲು ಅವನು ಎದ್ದು ನಿಂತನು.</verse>
				<verse number="28">ಯೇಸು ಮನೆಯೊಳಕ್ಕೆ ಬಂದಾಗ, ಅವರ ಶಿಷ್ಯರು ಅವರಿಗೆ ಪ್ರತ್ಯೇಕವಾಗಿ, “ಆ ಅಶುದ್ಧಾತ್ಮವನ್ನು ಹೊರಗೆ ಹಾಕುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು.</verse>
				<verse number="29">ಯೇಸು ಅವರಿಗೆ, “ಈ ತರವಾದದ್ದು ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಹೋಗಲಾರದು,” ಎಂದರು.</verse>
				<verse number="30">ಅವರು ಅಲ್ಲಿಂದ ಹೊರಟು ಗಲಿಲಾಯದ ಮಾರ್ಗವಾಗಿ ಹಾದುಹೋದರು. ತಾವು ಎಲ್ಲಿದ್ದೇವೆ ಎಂಬುದು ಬೇರೆಯವರಿಗೆ ತಿಳಿಯಬಾರದೆಂದು ಯೇಸು ಅಪೇಕ್ಷಿಸಿದರು.</verse>
				<verse number="31">ಏಕೆಂದರೆ ಯೇಸು ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನನ್ನು ಜನರ ಕೈಗಳಿಗೆ ಒಪ್ಪಿಸಿಕೊಡಲಾಗುವುದು. ಅವರು ನನ್ನನ್ನು ಕೊಲ್ಲುವರು. ನನ್ನನ್ನು ಕೊಂದ ತರುವಾಯ ಮೂರನೆಯ ದಿನದಲ್ಲಿ ನಾನು ಜೀವಂತವಾಗಿ ಏಳುವೆನು,” ಎಂದು ಬೋಧಿಸುತ್ತಿದ್ದರು.</verse>
				<verse number="32">ಆದರೆ ಅವರಲ್ಲಿ ಆ ಮಾತನ್ನು ಯಾರೂ ಗ್ರಹಿಸಲಿಲ್ಲ. ಯೇಸುವನ್ನು ಕೇಳುವುದಕ್ಕೂ ಭಯಪಟ್ಟರು.</verse>
				<verse number="33">ಅವರು ಕಪೆರ್ನೌಮಿಗೆ ಬಂದು ಮನೆಯಲ್ಲಿದ್ದಾಗ, ಯೇಸು ಅವರಿಗೆ, “ದಾರಿಯಲ್ಲಿ ನಿಮ್ಮೊಳಗೆ ನೀವು ಏನು ವಾಗ್ವಾದ ಮಾಡಿದಿರಿ?” ಎಂದು ಕೇಳಿದರು.</verse>
				<verse number="34">ಆದರೆ ಅವರು ಸುಮ್ಮನಿದ್ದರು. ಏಕೆಂದರೆ ಅವರು ತಮ್ಮೊಳಗೆ ಯಾವನು ಅತಿ ದೊಡ್ಡವನು ಎಂದು ದಾರಿಯಲ್ಲಿ ವಾಗ್ವಾದ ಮಾಡಿದ್ದರು.</verse>
				<verse number="35">ಆಗ ಯೇಸು ಕುಳಿತುಕೊಂಡು ಹನ್ನೆರಡು ಮಂದಿಯನ್ನು ಕರೆದು ಅವರಿಗೆ, “ಯಾವನಾದರೂ ಮೊದಲಿನವನಾಗಬೇಕೆಂದು ಇಷ್ಟಪಟ್ಟರೆ ಅವನು ಎಲ್ಲರಿಗಿಂತ ಕಡೆಯವನೂ ಎಲ್ಲರ ಸೇವಕನೂ ಆಗಿರಬೇಕು,” ಎಂದರು.</verse>
				<verse number="36">ಯೇಸು ಒಂದು ಮಗುವನ್ನು ತೆಗೆದುಕೊಂಡು ಅದನ್ನು ಅವರ ಮಧ್ಯದಲ್ಲಿ ನಿಲ್ಲಿಸಿ, ತಮ್ಮ ಕೈಗಳಲ್ಲಿ ಅದನ್ನು ಎತ್ತಿಕೊಂಡು ಅವರಿಗೆ,</verse>
				<verse number="37">“ಯಾವನಾದರೂ ಇಂಥ ಮಕ್ಕಳಲ್ಲಿ ಒಂದನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿದರೆ, ಅವನು ನನ್ನನ್ನು ಸ್ವೀಕರಿಸುತ್ತಾನೆ. ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಅಲ್ಲ ನನ್ನನ್ನು ಕಳುಹಿಸಿದ ತಂದೆಯನ್ನೇ ಸ್ವೀಕರಿಸುತ್ತಾನೆ,” ಎಂದರು.</verse>
				<verse number="38">ಆಗ ಯೋಹಾನನು, “ಬೋಧಕರೇ, ನಮ್ಮನ್ನು ಹಿಂಬಾಲಿಸದ ಒಬ್ಬನು ನಿಮ್ಮ ಹೆಸರಿನಲ್ಲಿ ದೆವ್ವ ಓಡಿಸುವುದನ್ನು ನಾವು ಕಂಡೆವು. ಅವನು ನಮ್ಮವನು ಅಲ್ಲದ್ದರಿಂದ ನಾವು ಅವನನ್ನು ತಡೆದೆವು,” ಎಂದು ಹೇಳಿದನು.</verse>
				<verse number="39">ಅದಕ್ಕೆ ಯೇಸು, “ಅವನನ್ನು ತಡೆಯಬೇಡಿರಿ; ನನ್ನ ಹೆಸರಿನಲ್ಲಿ ಅದ್ಭುತಕಾರ್ಯವನ್ನು ಮಾಡಿದವನು, ನನ್ನ ವಿಷಯದಲ್ಲಿ ಕೆಟ್ಟದ್ದನ್ನು ಮಾತನಾಡಲಾರನು.</verse>
				<verse number="40">ನಮಗೆ ವಿರೋಧಿಯಾಗಿರದವನು ನಮ್ಮ ಪಕ್ಷದವನಾಗಿದ್ದಾನೆ.</verse>
				<verse number="41">ಇದಲ್ಲದೆ ನೀವು ಕ್ರಿಸ್ತನಲ್ಲಿ ಸೇರಿದವರಾದ್ದರಿಂದ ಯಾರಾದರೂ ನನ್ನ ಹೆಸರಿನಲ್ಲೆ ನಿಮಗೆ ಒಂದು ಲೋಟ ನೀರನ್ನು ಕೊಟ್ಟರೂ ಅವರು ತಮ್ಮ ಪ್ರತಿಫಲವನ್ನು ಕಳೆದುಕೊಳ್ಳುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.</verse>
				<verse number="42">“ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬರಿಗೆ ಯಾರಾದರೂ ಪಾಪಕ್ಕೆ ಕಾರಣರಾದರೆ, ಅಂಥವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದಲ್ಲಿ ಬಿಸಾಡಿಬಿಡುವುದು ಅವರಿಗೆ ಲೇಸು.</verse>
				<verse number="43">ನಿಮ್ಮ ಕೈ ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ಎರಡು ಕೈಯುಳ್ಳವರಾಗಿ ಎಂದಿಗೂ ಆರದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಅಂಗಹೀನರಾಗಿ ನಿತ್ಯಜೀವನವನ್ನು ಸೇರುವುದು ನಿಮಗೆ ಲೇಸು.</verse>
				<verse number="44">ನರಕದಲ್ಲಿ, “ ‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ ಮತ್ತು ಬೆಂಕಿಯು ಆರುವುದಿಲ್ಲ.’</verse>
				<verse number="45">ನಿಮ್ಮ ಕಾಲು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಡಿದುಹಾಕಿರಿ. ನೀವು ಎರಡು ಕಾಲುಳ್ಳವರಾಗಿ ಆರದ ಬೆಂಕಿಯ ನರಕದಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಕುಂಟರಾಗಿ ನಿತ್ಯಜೀವನವನ್ನು ಸೇರುವುದು ನಿಮಗೆ ಲೇಸು.</verse>
				<verse number="46">ನರಕದಲ್ಲಿ, “ ‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ ಮತ್ತು ಬೆಂಕಿಯು ಆರುವುದಿಲ್ಲ.’</verse>
				<verse number="47">ನಿಮ್ಮ ಕಣ್ಣು ನಿಮ್ಮ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಬಿಡಿರಿ. ಎರಡು ಕಣ್ಣುಳ್ಳವರಾಗಿ ನರಕದ ಬೆಂಕಿಯಲ್ಲಿ ಹಾಕಿಸಿಕೊಳ್ಳುವುದಕ್ಕಿಂತ ಒಂದು ಕಣ್ಣುಳ್ಳವರಾಗಿ ದೇವರ ರಾಜ್ಯದಲ್ಲಿ ಸೇರುವುದು ನಿಮಗೆ ಲೇಸು.</verse>
				<verse number="48">ನರಕದಲ್ಲಿ, “ ‘ಅವರನ್ನು ಕಡಿಯುವ ಹುಳ ಸಾಯುವುದಿಲ್ಲ, ಮತ್ತು ಬೆಂಕಿಯು ಆರುವುದಿಲ್ಲ.’</verse>
				<verse number="49">ಉಪ್ಪನ್ನು ಪರೀಕ್ಷಿಸುವಂತೆ ಪ್ರತಿಯೊಬ್ಬರು ಬೆಂಕಿಯ ಮೂಲಕ ಪರೀಕ್ಷೆಗೆ ಒಳಪಡಬೇಕಾಗುತ್ತದೆ.</verse>
				<verse number="50">“ಉಪ್ಪು ಒಳ್ಳೆಯದು. ಆದರೆ ಉಪ್ಪೇ ಸಪ್ಪಗಾದರೆ, ಇನ್ನಾವುದರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರುವಂತೆ, ಒಬ್ಬರಿಗೊಬ್ಬರು ಸಮಾಧಾನದಿಂದಿರಿ,” ಎಂದರು.</verse>
			</chapter>
			<chapter number="10">
				<verse number="1">ಯೇಸು ಅಲ್ಲಿಂದ ಹೊರಟು ಯೊರ್ದನ್ ನದಿಯ ಆಚೆಯ ಯೂದಾಯ ಪ್ರಾಂತಕ್ಕೆ ಬಂದರು. ಅಲ್ಲಿ ಜನರು ತಿರುಗಿ ಅವರ ಬಳಿಗೆ ಬರಲು, ಯೇಸು ತಮ್ಮ ವಾಡಿಕೆಯಂತೆ ಅವರಿಗೆ ಮತ್ತೆ ಬೋಧಿಸಿದರು.</verse>
				<verse number="2">ಫರಿಸಾಯರಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು ಅವರನ್ನು ಪರೀಕ್ಷಿಸುವುದಕ್ಕಾಗಿ ಯೇಸುವಿಗೆ, “ಒಬ್ಬ ಪುರುಷನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೋ?” ಎಂದು ಕೇಳಿದರು.</verse>
				<verse number="3">ಯೇಸು ಉತ್ತರವಾಗಿ ಅವರಿಗೆ, “ಮೋಶೆಯು ನಿಮಗೆ ಏನು ಅಪ್ಪಣೆಕೊಟ್ಟನು?” ಎಂದು ಕೇಳಿದರು.</verse>
				<verse number="4">ಅದಕ್ಕೆ ಅವರು, “ವಿವಾಹ ವಿಚ್ಛೇದನ ಪತ್ರವನ್ನು ಬರೆದುಕೊಟ್ಟು ಆಕೆಯನ್ನು ಬಿಟ್ಟುಬಿಡಬೇಕೆಂದು ಮೋಶೆಯು ಅನುಮತಿ ಕೊಟ್ಟನು,” ಎಂದರು.</verse>
				<verse number="5">ಯೇಸು ಉತ್ತರವಾಗಿ ಅವರಿಗೆ, “ಮೋಶೆಯು ನಿಮ್ಮ ಹೃದಯ ಕಾಠಿಣ್ಯದ ನಿಮಿತ್ತವಾಗಿ ನಿಮಗೆ ಈ ಆಜ್ಞೆಯನ್ನು ಬರೆದನು.</verse>
				<verse number="6">ಆದರೆ ಸೃಷ್ಟಿಯ ಪ್ರಾರಂಭದಿಂದಲೇ ದೇವರು, ‘ಅವರನ್ನು ಗಂಡು ಹೆಣ್ಣಾಗಿ ಮಾಡಿದರು.’</verse>
				<verse number="7">‘ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು.</verse>
				<verse number="8">ಅವರಿಬ್ಬರೂ ಒಂದೇ ಶರೀರವಾಗಿರುವರು.’ ಹೀಗೆ ಅವರು ಇನ್ನು ಇಬ್ಬರಲ್ಲ, ಒಂದೇ ಶರೀರವಾಗಿದ್ದಾರೆ.</verse>
				<verse number="9">ಆದಕಾರಣ ದೇವರು ಕೂಡಿಸಿದ್ದನ್ನು ಮನುಷ್ಯನು ಅಗಲಿಸಬಾರದು,” ಎಂದರು.</verse>
				<verse number="10">ಶಿಷ್ಯರು ಮನೆಯಲ್ಲಿ ಅದೇ ವಿಷಯವನ್ನು ಯೇಸುವಿಗೆ ತಿರುಗಿ ಕೇಳಿದರು.</verse>
				<verse number="11">ಅದಕ್ಕೆ ಯೇಸು ಅವರಿಗೆ, “ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಯಾದರೆ, ಅವಳಿಗೆ ವಿರೋಧವಾಗಿ ವ್ಯಭಿಚಾರ ಮಾಡುವವನಾಗಿದ್ದಾನೆ.</verse>
				<verse number="12">ಇದಲ್ಲದೆ ಒಬ್ಬ ಸ್ತ್ರೀಯು ತನ್ನ ಗಂಡನನ್ನು ಬಿಟ್ಟು ಬೇರೊಬ್ಬನನ್ನು ಮದುವೆಯಾದರೆ, ಅವಳು ವ್ಯಭಿಚಾರ ಮಾಡುವವಳಾಗಿದ್ದಾಳೆ,” ಎಂದರು.</verse>
				<verse number="13">ಕೆಲವರು ತಮ್ಮ ಚಿಕ್ಕಮಕ್ಕಳನ್ನು ಯೇಸು ಮುಟ್ಟಬೇಕೆಂದು ಅವರ ಬಳಿಗೆ ತಂದರು. ಆದರೆ ಶಿಷ್ಯರು ಜನರನ್ನು ಗದರಿಸಿದರು.</verse>
				<verse number="14">ಯೇಸು ಅದನ್ನು ಕಂಡಾಗ ಕೋಪಗೊಂಡು ಅವರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ. ಅವುಗಳಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಇಂಥವರದೇ.</verse>
				<verse number="15">ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾರಾದರೂ ಚಿಕ್ಕಮಗುವಿನಂತೆ ದೇವರ ರಾಜ್ಯವನ್ನು ಸ್ವೀಕರಿಸದಿದ್ದರೆ, ಅವರು ಅದರೊಳಗೆ ಸೇರುವುದೇ ಇಲ್ಲ,” ಎಂದರು.</verse>
				<verse number="16">ಇದಲ್ಲದೆ ಯೇಸು ಆ ಮಕ್ಕಳನ್ನು ಎತ್ತಿಕೊಂಡು ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟು ಆಶೀರ್ವದಿಸಿದರು.</verse>
				<verse number="17">ಯೇಸು ಅಲ್ಲಿಂದ ಹೋಗುತ್ತಿದ್ದಾಗ ಒಬ್ಬನು ಓಡುತ್ತಾ ಬಂದು ಅವರ ಮುಂದೆ ಮೊಣಕಾಲೂರಿ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಯೇಸುವನ್ನು ಕೇಳಿದನು.</verse>
				<verse number="18">ಯೇಸು ಅವನಿಗೆ, “ನೀನು ನನ್ನನ್ನು ಒಳ್ಳೆಯವನೆಂದು ಏಕೆ ಕರೆಯುತ್ತಿ? ದೇವರೊಬ್ಬನೇ ಹೊರತು ಬೇರೆ ಯಾರೂ ಒಳ್ಳೆಯವರಲ್ಲ.</verse>
				<verse number="19">‘ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,’ ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆಯಲ್ಲಾ,” ಎಂದರು.</verse>
				<verse number="20">ಅವನು, “ಬೋಧಕರೇ, ನಾನು ಇವೆಲ್ಲವನ್ನು ನನ್ನ ಬಾಲ್ಯದಿಂದಲೇ ಅನುಸರಿಸಿದ್ದೇನೆ,” ಎಂದು ಹೇಳಿದನು.</verse>
				<verse number="21">ಯೇಸು ಅವನನ್ನು ದೃಷ್ಟಿಸಿ ನೋಡುತ್ತಾ ಅವನನ್ನು ಪ್ರೀತಿಸಿ ಅವನಿಗೆ, “ನಿನಗೆ ಒಂದು ಕಡಿಮೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.</verse>
				<verse number="22">ಆ ಮಾತಿಗೆ ಅವನು ವ್ಯಸನಗೊಂಡು ದುಃಖದಿಂದ ಹೊರಟುಹೋದನು. ಏಕೆಂದರೆ ಅವನಿಗೆ ಬಹಳ ಆಸ್ತಿ ಇತ್ತು.</verse>
				<verse number="23">ಯೇಸು ಸುತ್ತಲೂ ನೋಡಿ ತಮ್ಮ ಶಿಷ್ಯರಿಗೆ, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ!” ಎಂದರು.</verse>
				<verse number="24">ಶಿಷ್ಯರು ಯೇಸುವಿನ ಮಾತುಗಳಿಗೆ ಬೆರಗಾದರು. ಆದರೆ ಯೇಸು ತಿರುಗಿ ಅವರಿಗೆ, “ಮಕ್ಕಳೇ, ದೇವರ ರಾಜ್ಯವನ್ನು ಪ್ರವೇಶಿಸುವುದು ಬಹಳ ಕಷ್ಟ.</verse>
				<verse number="25">ಒಬ್ಬ ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ,” ಎಂದು ಹೇಳಿದರು.</verse>
				<verse number="26">ಅದಕ್ಕೆ ಶಿಷ್ಯರು ಅತ್ಯಂತ ಆಶ್ಚರ್ಯಪಟ್ಟು ತಮ್ಮೊಳಗೆ, “ಹಾಗಾದರೆ ಯಾರು ರಕ್ಷಣೆ ಹೊಂದುವವರು?” ಎಂದುಕೊಂಡರು.</verse>
				<verse number="27">ಅದಕ್ಕೆ ಯೇಸು ಅವರನ್ನು ದೃಷ್ಟಿಸಿ ನೋಡಿ ಅವರಿಗೆ, “ಮನುಷ್ಯರಿಗೆ ಇದು ಅಸಾಧ್ಯ, ದೇವರಿಗೆ ಅಲ್ಲ, ದೇವರಿಗೆ ಎಲ್ಲವೂ ಸಾಧ್ಯ,” ಎಂದರು.</verse>
				<verse number="28">ಪೇತ್ರನು ಯೇಸುವಿಗೆ, “ಇಗೋ, ನಾವು ಎಲ್ಲವನ್ನು ಬಿಟ್ಟು ನಿನ್ನನ್ನು ಹಿಂಬಾಲಿಸಿದ್ದೇವೆ,” ಎಂದು ಹೇಳಲಾರಂಭಿಸಿದನು.</verse>
				<verse number="29">ಅದಕ್ಕೆ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಯಾರಾದರೂ ನನ್ನ ನಿಮಿತ್ತವಾಗಿಯೂ ಸುವಾರ್ತೆಯ ನಿಮಿತ್ತವಾಗಿಯೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಂದೆಯನ್ನಾಗಲಿ, ತಾಯಿಯನ್ನಾಗಲಿ, ಮಕ್ಕಳನ್ನಾಗಲಿ, ಹೊಲವನ್ನಾಗಲಿ ಬಿಟ್ಟುಬಿಟ್ಟರೆ,</verse>
				<verse number="30">ಅವರು ಈಗಿನ ಕಾಲದಲ್ಲಿ ಹಿಂಸೆಗಳ ಸಹಿತವಾಗಿ ಮನೆಗಳನ್ನೂ ಸಹೋದರರನ್ನೂ ಸಹೋದರಿಯರನ್ನೂ ತಾಯಂದಿರನ್ನೂ ಮಕ್ಕಳನ್ನೂ ಹೊಲವನ್ನೂ ನೂರರಷ್ಟು ಪಡೆಯುವುದಲ್ಲದೆ ಮುಂದಿನ ಲೋಕದಲ್ಲಿ ನಿತ್ಯಜೀವವನ್ನು ಹೊಂದುವರು.</verse>
				<verse number="31">ಆದರೆ ಮೊದಲನೆಯವರಾದ ಅನೇಕರು ಕಡೆಯವರಾಗುವರು, ಕಡೆಯವರಾದವರು ಮೊದಲಿನವರಾಗುವರು,” ಎಂದರು.</verse>
				<verse number="32">ಅವರು ಯೆರೂಸಲೇಮಿಗೆ ಹೋಗುವ ದಾರಿಯಲ್ಲಿದ್ದರು. ಯೇಸು ಅವರ ಮುಂದಾಗಿ ಹೋದದ್ದರಿಂದ ಶಿಷ್ಯರು ಆಶ್ಚರ್ಯಪಟ್ಟರು. ಯೇಸುವಿನ ಹಿಂದೆ ಬರುತ್ತಿದ್ದವರು ಭಯಪಟ್ಟರು. ಯೇಸು ತಮ್ಮ ಹನ್ನೆರಡು ಮಂದಿಯನ್ನು ತಿರುಗಿ ಕರೆದು ತನಗೆ ಸಂಭವಿಸುವ ಸಂಗತಿಗಳನ್ನು ಅವರಿಗೆ ಹೇಳಲಾರಂಭಿಸಿದರು:</verse>
				<verse number="33">“ಇಗೋ, ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ಮನುಷ್ಯಪುತ್ರನಾದ ನನ್ನನ್ನು ಮುಖ್ಯಯಾಜಕರ ಮತ್ತು ನಿಯಮ ಬೋಧಕರ ಕೈಗೆ ಒಪ್ಪಿಸಿಕೊಡುವರು. ಅವರು ನನಗೆ ಮರಣದಂಡನೆಯನ್ನು ವಿಧಿಸಿ ನನ್ನನ್ನು ಯೆಹೂದ್ಯರಲ್ಲದವರಿಗೆ ಒಪ್ಪಿಸುವರು.</verse>
				<verse number="34">ಇವರು ನನ್ನನ್ನು ಹಾಸ್ಯಮಾಡಿ, ನನ್ನ ಮೇಲೆ ಉಗುಳಿ, ಕೊರಡೆಯಿಂದ ಹೊಡೆದು ನನ್ನನ್ನು ಕೊಂದುಹಾಕುವರು. ನಾನಾದರೋ ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರುವೆನು,” ಎಂದರು.</verse>
				<verse number="35">ಆಗ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರು ಯೇಸುವಿನ ಬಳಿಗೆ ಬಂದು, “ಬೋಧಕರೇ, ನಾವು ಕೇಳುವುದನ್ನು ನೀವು ನಮಗೋಸ್ಕರ ಮಾಡಬೇಕು,” ಎಂದರು.</verse>
				<verse number="36">ಅದಕ್ಕೆ ಯೇಸು ಅವರಿಗೆ, “ನಾನು ನಿಮಗೆ ಏನು ಮಾಡಬೇಕೆಂದು ಅಪೇಕ್ಷಿಸುತ್ತೀರಿ?” ಎಂದು ಕೇಳಿದರು.</verse>
				<verse number="37">ಅವರು ಯೇಸುವಿಗೆ, “ನಾವು ನಿನ್ನ ಮಹಿಮೆಯಲ್ಲಿ ಒಬ್ಬನು ನಿಮ್ಮ ಬಲಗಡೆಯಲ್ಲೂ ಇನ್ನೊಬ್ಬನು ನಿಮ್ಮ ಎಡಗಡೆಯಲ್ಲೂ ಕುಳಿತುಕೊಳ್ಳುವಂತೆ ನಮಗೆ ಅನುಗ್ರಹಿಸಬೇಕು,” ಎಂದರು.</verse>
				<verse number="38">ಯೇಸು ಅವರಿಗೆ, “ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯುವ ಪಾತ್ರೆಯಲ್ಲಿ ನೀವೂ ಕುಡಿಯುವಿರೋ? ನಾನು ಪಡೆಯಲಿರುವ ದೀಕ್ಷಾಸ್ನಾನವನ್ನು ನೀವೂ ಪಡೆಯುವಿರೋ?” ಎಂದರು.</verse>
				<verse number="39">ಅದಕ್ಕೆ ಅವರು, “ಹೌದು, ನಮ್ಮಿಂದಾಗುವುದು,” ಎಂದು ಹೇಳಿದರು. ಆಗ ಯೇಸು ಅವರಿಗೆ, “ನಾನು ಕುಡಿಯುವ ಪಾತ್ರೆಯಿಂದ ನೀವು ಕುಡಿಯುವಿರಿ. ನಾನು ಹೊಂದುವ ದೀಕ್ಷಾಸ್ನಾನವನ್ನು ನೀವೂ ಹೊಂದುವಿರಿ.</verse>
				<verse number="40">ಆದರೆ ನನ್ನ ಬಲಗಡೆಯಲ್ಲಾಗಲಿ ಎಡಗಡೆಯಲ್ಲಾಗಲಿ ಕುಳಿತುಕೊಳ್ಳುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗೋಸ್ಕರ ಸಿದ್ಧವಾಗಿದೆಯೋ ಅವರಿಗೇ ಕೊಡಲಾಗುವುದು,” ಎಂದರು.</verse>
				<verse number="41">ಆ ಹತ್ತು ಮಂದಿ ಶಿಷ್ಯರು ಇದನ್ನು ಕೇಳಿದಾಗ, ಯಾಕೋಬ ಮತ್ತು ಯೋಹಾನರ ಮೇಲೆ ಕೋಪಗೊಂಡರು.</verse>
				<verse number="42">ಯೇಸು ಶಿಷ್ಯರನ್ನು ತಮ್ಮ ಹತ್ತಿರಕ್ಕೆ ಕರೆದು ಅವರಿಗೆ, “ಆಳುವವರು ಎಂದೆನಿಸಿಕೊಂಡವರು ಯೆಹೂದ್ಯರಲ್ಲದವರ ಮೇಲೆ ದೊರೆತನ ಮಾಡುತ್ತಾರೆ. ಅವರಲ್ಲಿ ಉನ್ನತ ಅಧಿಕಾರಿಗಳು ಅವರ ಮೇಲೆ ಅಧಿಕಾರ ಮಾಡುತ್ತಾರೆಂದು ನೀವು ಬಲ್ಲಿರಿ.</verse>
				<verse number="43">ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಬೇಕೆಂದಿರುವವನು ನಿಮ್ಮ ಸೇವಕನಾಗಿರಲಿ.</verse>
				<verse number="44">ನಿಮ್ಮಲ್ಲಿ ಯಾವನಾದರೂ ಪ್ರಮುಖನಾಗಬೇಕೆಂದಿದ್ದರೆ ಎಲ್ಲರಿಗೂ ದಾಸನಾಗಿರಲಿ.</verse>
				<verse number="45">ಮನುಷ್ಯಪುತ್ರನಾದ ನಾನು ಸಹ ಸೇವೆಮಾಡಿಸಿಕೊಳ್ಳುವುದಕ್ಕಾಗಿ ಅಲ್ಲ, ಸೇವೆಮಾಡುವುದಕ್ಕಾಗಿಯೂ ಅನೇಕರಿಗಾಗಿ ನನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕಾಗಿಯೂ ಬಂದಿದ್ದೇನೆ,” ಎಂದು ಹೇಳಿದರು.</verse>
				<verse number="46">ತರುವಾಯ ಅವರು ಯೆರಿಕೋವಿಗೆ ಬಂದರು. ಯೇಸು ತಮ್ಮ ಶಿಷ್ಯರೊಡನೆಯೂ ಅಸಂಖ್ಯಾತ ಜನರೊಡನೆಯೂ ಯೆರಿಕೋವಿನಿಂದ ಹೊರಟಾಗ ತಿಮಾಯನ ಮಗ ಕುರುಡ ಬಾರ್ತಿಮಾಯನು ದಾರಿಯಲ್ಲಿ ಕುಳಿತುಕೊಂಡು ಭಿಕ್ಷೆಬೇಡುತ್ತಿದ್ದನು.</verse>
				<verse number="47">ನಜರೇತಿನ ಯೇಸು ಬರುತ್ತಿದ್ದಾರೆ ಎಂದು ಅವನು ಕೇಳಿದಾಗ, “ಯೇಸುವೇ, ದಾವೀದನ ಪುತ್ರನೇ, ನನ್ನನ್ನು ಕರುಣಿಸು,” ಎಂದು ಕೂಗಿಕೊಳ್ಳಲಾರಂಭಿಸಿದನು.</verse>
				<verse number="48">ಸುಮ್ಮನಿರುವಂತೆ ಅನೇಕರು ಅವನಿಗೆ ಒತ್ತಾಯಪಡಿಸಿ ಹೇಳಿದರು. ಆದರೆ ಅವನು ಇನ್ನೂ ಗಟ್ಟಿಯಾಗಿ, “ದಾವೀದನ ಪುತ್ರನೇ, ನನ್ನನ್ನು ಕರುಣಿಸು,” ಎಂದು ಇನ್ನಷ್ಟು ಕೂಗಿದನು.</verse>
				<verse number="49">ಯೇಸು ನಿಂತು, ಅವನನ್ನು ಕರೆಯಬೇಕೆಂದು ಆಜ್ಞಾಪಿಸಲು, ಅವರು ಆ ಕುರುಡನನ್ನು ಕರೆದು, “ಧೈರ್ಯವಾಗಿರು, ಏಳು, ಯೇಸು ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಅವನಿಗೆ ಹೇಳಿದರು.</verse>
				<verse number="50">ಅವನು ತನ್ನ ಮೇಲಂಗಿಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು.</verse>
				<verse number="51">ಯೇಸು ಅವನಿಗೆ, “ನಾನು ನಿನಗೆ ಏನು ಮಾಡಬೇಕೆಂದು ನೀನು ಕೋರುತ್ತೀ?” ಎಂದು ಕೇಳಲು, ಆ ಕುರುಡನು ಯೇಸುವಿಗೆ, “ಗುರುವೇ, ನನಗೆ ಕಣ್ಣು ಕಾಣುವಂತೆ ಮಾಡಬೇಕು,” ಎಂದನು.</verse>
				<verse number="52">ಅದಕ್ಕೆ ಯೇಸು ಅವನಿಗೆ, “ಹೋಗು, ನಿನ್ನ ನಂಬಿಕೆಯೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು. ಕೂಡಲೇ ಅವನು ತನ್ನ ದೃಷ್ಟಿಯನ್ನು ಪಡೆದು, ದಾರಿಯಲ್ಲಿ ಯೇಸುವನ್ನು ಹಿಂಬಾಲಿಸಿದನು.</verse>
			</chapter>
			<chapter number="11">
				<verse number="1">ಅವರು ಯೆರೂಸಲೇಮಿಗೆ ಸಮೀಪಿಸಿ ಓಲಿವ್ ಗುಡ್ಡದ ಕಡೆಗೆ ಇರುವ ಬೇತ್ಫಗೆ ಮತ್ತು ಬೇಥಾನ್ಯಕ್ಕೂ ಬಂದಾಗ ಯೇಸು ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ,</verse>
				<verse number="2">“ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ. ನೀವು ಅದರೊಳಗೆ ಪ್ರವೇಶಿಸಿದ ಕೂಡಲೇ ಕಟ್ಟಿರುವ ಮತ್ತು ಯಾರೂ ಅದರ ಮೇಲೆ ಸವಾರಿ ಮಾಡದಿರುವ ಒಂದು ಕತ್ತೆಮರಿಯನ್ನು ಅಲ್ಲಿ ಕಾಣುವಿರಿ. ಅದನ್ನು ಬಿಚ್ಚಿ ಇಲ್ಲಿಗೆ ತೆಗೆದುಕೊಂಡು ಬನ್ನಿರಿ.</verse>
				<verse number="3">ಯಾವನಾದರೂ ನಿಮಗೆ, ‘ಏಕೆ ಹೀಗೆ ಮಾಡುತ್ತೀರಿ?’ ಎಂದು ಕೇಳಿದರೆ, ‘ಇದು ಕರ್ತದೇವರಿಗೆ ಅವಶ್ಯವಾಗಿದೆ, ಆತನು ಕೂಡಲೇ ಇದನ್ನು ಹಿಂದಕ್ಕೆ ಕಳುಹಿಸುವನು,’ ” ಎಂದು ಹೇಳಿರಿ ಎಂದರು.</verse>
				<verse number="4">ಆಗ ಅವರು ಹೊರಟುಹೋಗಿ ಬೀದಿಯಲ್ಲಿದ್ದ ಒಂದು ಮನೆಯ ಬಾಗಿಲಿನ ಹತ್ತಿರ ಕಟ್ಟಿದ್ದ ಕತ್ತೆಮರಿಯನ್ನು ಕಂಡರು. ಅವರು ಅದನ್ನು ಬಿಚ್ಚುತ್ತಿರುವಾಗ,</verse>
				<verse number="5">ಅಲ್ಲಿ ನಿಂತಿದ್ದ ಕೆಲವರು ಅವರಿಗೆ, “ಆ ಕತ್ತೆಮರಿಯನ್ನು ಏಕೆ ಬಿಚ್ಚುತ್ತೀರಿ?” ಎಂದು ಕೇಳಿದರು.</verse>
				<verse number="6">ಅದಕ್ಕೆ ಅವರು ಯೇಸು ತಮಗೆ ಹೇಳಿದ ಪ್ರಕಾರ ಉತ್ತರ ಕೊಡಲು, ಅವರು ಅದನ್ನು ತೆಗೆದುಕೊಂಡು ಹೋಗಲು ಬಿಟ್ಟರು.</verse>
				<verse number="7">ಶಿಷ್ಯರು ಕತ್ತೆಮರಿಯನ್ನು ಯೇಸುವಿನ ಬಳಿಗೆ ತಂದು ಅದರ ಮೇಲೆ ತಮ್ಮ ಬಟ್ಟೆಗಳನ್ನು ಹಾಕಿದಾಗ ಯೇಸು ಅದರ ಮೇಲೆ ಕುಳಿತುಕೊಂಡರು.</verse>
				<verse number="8">ಅನೇಕರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. ಇತರರು ತೋಟಗಳಿಂದ ರೆಂಬೆಗಳನ್ನು ಕಡಿದು ದಾರಿಯಲ್ಲಿ ಹರಡಿದರು.</verse>
				<verse number="9">ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗುತ್ತಾ, “ಹೊಸನ್ನ!” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ!”</verse>
				<verse number="10">“ಬರಲಿರುವ ನಮ್ಮ ತಂದೆಯಾದ ದಾವೀದನ ರಾಜ್ಯವು ಆಶೀರ್ವಾದ ಹೊಂದಲಿ!” “ಉನ್ನತದಲ್ಲಿ ಹೊಸನ್ನ!” ಎಂದು ಹೇಳಿದರು.</verse>
				<verse number="11">ಯೇಸು ಯೆರೂಸಲೇಮಿಗೆ ಹೋಗಿ ದೇವಾಲಯವನ್ನು ಪ್ರವೇಶಿಸಿದಾಗ ಸುತ್ತಲಿದ್ದ ಎಲ್ಲವುಗಳನ್ನು ನೋಡಿದರು. ಆಗ ಸಂಜೆಯಾಗಿದ್ದುದರಿಂದ ಯೇಸು ಹನ್ನೆರಡು ಮಂದಿಯೊಂದಿಗೆ ಬೇಥಾನ್ಯಕ್ಕೆ ಹೋದರು.</verse>
				<verse number="12">ಮರುದಿನ ಅವರು ಬೇಥಾನ್ಯದಿಂದ ಬರುತ್ತಿರುವಾಗ ಯೇಸುವಿಗೆ ಹಸಿವಾಯಿತು.</verse>
				<verse number="13">ಯೇಸು ಎಲೆಗಳಿದ್ದ ಒಂದು ಅಂಜೂರದ ಮರವನ್ನು ದೂರದಿಂದ ಕಂಡು ಒಂದು ವೇಳೆ ಅದರಲ್ಲಿ ಹಣ್ಣು ಏನಾದರೂ ಸಿಕ್ಕೀತೆಂದುಕೊಂಡರು. ಆದರೆ ಯೇಸು ಅದರ ಹತ್ತಿರ ಬಂದಾಗ ಎಲೆಗಳನ್ನು ಹೊರತು ಮತ್ತೇನೂ ಕಾಣಲಿಲ್ಲ. ಅದು ಅಂಜೂರ ಫಲದ ಕಾಲವಾಗಿರಲಿಲ್ಲ.</verse>
				<verse number="14">ಯೇಸು ಅದಕ್ಕೆ, “ಇನ್ನೆಂದಿಗೂ ಯಾರೂ ನಿನ್ನಿಂದ ಹಣ್ಣನ್ನು ತಿನ್ನದಿರಲಿ,” ಎಂದರು. ಅದನ್ನು ಅವರ ಶಿಷ್ಯರು ಕೇಳಿಸಿಕೊಂಡರು.</verse>
				<verse number="15">ತರುವಾಯ ಅವರು ಯೆರೂಸಲೇಮಿಗೆ ಬಂದರು. ಯೇಸು ದೇವಾಲಯದ ಅಂಗಳದೊಳಗೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡುಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ, ಹಣ ವಿನಿಮಯ ಮಾಡುತ್ತಿದ್ದವರ ಮೇಜುಗಳನ್ನೂ ಪಾರಿವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿದರು.</verse>
				<verse number="16">ಯಾರೂ ದೇವಾಲಯದ ಮಾರ್ಗವಾಗಿ ಯಾವುದನ್ನೂ ತೆಗೆದುಕೊಂಡು ಹೋಗದಂತೆ ತಡೆದರು.</verse>
				<verse number="17">ಯೇಸು ಅವರಿಗೆ ಬೋಧಿಸುತ್ತಾ, “ನನ್ನ ಮನೆಯು ಎಲ್ಲಾ ಜನಾಂಗಗಳಿಗೂ ‘ಪ್ರಾರ್ಥನೆಯ ಮನೆ’ ಎಂದು ಕರೆಯಿಸಿಕೊಳ್ಳುವುದೆಂದು ಬರೆದಿದೆಯಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ,” ಎಂದು ಹೇಳಿದರು.</verse>
				<verse number="18">ಮುಖ್ಯಯಾಜಕರೂ ನಿಯಮ ಬೋಧಕರೂ ಅದನ್ನು ಕೇಳಿ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಯೇಸುವಿನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಯೇಸುವಿಗೆ ಭಯಪಟ್ಟರು.</verse>
				<verse number="19">ಸಂಜೆಯಾದಾಗ ಯೇಸು ಮತ್ತು ಅವರ ಶಿಷ್ಯರು ಪಟ್ಟಣದ ಹೊರಗೆ ಹೋದರು.</verse>
				<verse number="20">ಬೆಳಿಗ್ಗೆ ಅವರು ಅದೇ ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರ ಮರವು ಬೇರುಸಹಿತವಾಗಿ ಒಣಗಿರುವುದನ್ನು ಕಂಡರು.</verse>
				<verse number="21">ಆಗ ಪೇತ್ರನು ಜ್ಞಾಪಕಮಾಡಿಕೊಂಡು ಯೇಸುವಿಗೆ, “ಗುರುವೇ, ಇಗೋ! ನೀನು ಶಪಿಸಿದ ಅಂಜೂರದ ಮರವು ಒಣಗಿಹೋಗಿದೆ!” ಎಂದು ಹೇಳಿದನು.</verse>
				<verse number="22">ಯೇಸು ಉತ್ತರವಾಗಿ ಅವರಿಗೆ ಹೇಳಿದ್ದೇನೆಂದರೆ, “ದೇವರ ನಂಬಿಕೆ ನಿಮಗಿರಲಿ.</verse>
				<verse number="23">ಏಕೆಂದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು,’ ಎಂದು ಹೇಳಿ ತಮ್ಮ ಹೃದಯದಲ್ಲಿ ಸಂಶಯಪಡದೆ ತಾವು ಹೇಳಿದಂತೆಯೇ ಆಗುವುದೆಂದು ನಂಬಿದರೆ ಅವರು ಹೇಳಿದಂತೆಯೇ ಅವರಿಗೆ ಆಗುವುದು.</verse>
				<verse number="24">ಆದಕಾರಣ, ನೀವು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಎಲ್ಲವೂ ನಿಮಗೆ ಸಿಕ್ಕಿವೆಯೆಂದು ನಂಬಿರಿ. ಅವು ನಿಮಗೆ ಲಭಿಸುವವು.</verse>
				<verse number="25">ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರಿಗಾದರೂ ವಿರೋಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ಸಹ ನಿಮ್ಮ ಅಪರಾಧಗಳನ್ನು ಕ್ಷಮಿಸುವರು.</verse>
				<verse number="26">ಆದರೆ ನೀವು ಕ್ಷಮಿಸದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಪಾಪಗಳನ್ನು ಕ್ಷಮಿಸುವುದಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.</verse>
				<verse number="27">ಯೇಸು ಮತ್ತು ಶಿಷ್ಯರು ಪುನಃ ಯೆರೂಸಲೇಮಿಗೆ ಬಂದರು. ಯೇಸು ದೇವಾಲಯದಲ್ಲಿ ತಿರುಗಾಡುತ್ತಿರುವಾಗ, ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ಯೇಸುವಿನ ಬಳಿಗೆ ಬಂದು</verse>
				<verse number="28">ಯೇಸುವಿಗೆ, “ಯಾವ ಅಧಿಕಾರದಿಂದ ನೀನು ಇವುಗಳನ್ನು ಮಾಡುತ್ತೀ? ಇವುಗಳನ್ನು ಮಾಡುವುದಕ್ಕೆ ನಿನಗೆ ಅಧಿಕಾರ ಕೊಟ್ಟವರು ಯಾರು?” ಎಂದು ಕೇಳಿದರು.</verse>
				<verse number="29">ಅದಕ್ಕೆ ಯೇಸು ಅವರಿಗೆ, “ನಾನು ಸಹ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ. ನೀವು ನನಗೆ ಉತ್ತರ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ.</verse>
				<verse number="30">ಯೋಹಾನನಿಗೆ ದೀಕ್ಷಾಸ್ನಾನವನ್ನು ಕೊಡುವ ಅಧಿಕಾರ ಪರಲೋಕದಿಂದ ಬಂದದ್ದೋ ಇಲ್ಲವೇ ಮನುಷ್ಯರಿಂದಲೋ? ನನಗೆ ಉತ್ತರಕೊಡಿರಿ,” ಎಂದರು.</verse>
				<verse number="31">ಆಗ ಅವರು, “ಪರಲೋಕದಿಂದ ಎಂದು ನಾವು ಹೇಳಿದರೆ, ‘ನೀವು ಏಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವರು.</verse>
				<verse number="32">ಆದರೆ ನಾವು, ‘ಮನುಷ್ಯರಿಂದ ಬಂತು’ ಎಂದು ಹೇಳುವುದಾದರೆ, ನಮಗೆ ಜನರ ಭಯವಿದೆ. ಏಕೆಂದರೆ ಯೋಹಾನನು ನಿಜವಾಗಿಯೂ ಪ್ರವಾದಿ ಎಂದು ಎಲ್ಲರೂ ಎಣಿಸಿಕೊಂಡಿರುವರು,” ಎಂದು ತಮ್ಮಲ್ಲಿ ಚರ್ಚಿಸಿಕೊಂಡರು.</verse>
				<verse number="33">ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ,” ಎಂದು ಉತ್ತರಕೊಟ್ಟರು. ಅದಕ್ಕೆ ಯೇಸು, “ಹಾಗಾದರೆ ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದು ಅವರಿಗೆ ಉತ್ತರಕೊಟ್ಟರು.</verse>
			</chapter>
			<chapter number="12">
				<verse number="1">ಯೇಸು ಸಾಮ್ಯಗಳಿಂದ ಮಾತನಾಡಲು ಪ್ರಾರಂಭಿಸಿದರು: “ಒಬ್ಬಾನೊಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ ಸುತ್ತಲೂ ಬೇಲಿ ಹಾಕಿದನು. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಅಗೆದು ಕಾವಲುಗೋಪುರವನ್ನು ಕಟ್ಟಿ ರೈತರಿಗೆ ವಹಿಸಿಬಿಟ್ಟು ದೂರದೇಶಕ್ಕೆ ಹೊರಟುಹೋದನು.</verse>
				<verse number="2">ಫಲದ ಕಾಲ ಬಂದಾಗ ಅವನು ದ್ರಾಕ್ಷಿತೋಟದ ಫಲವನ್ನು ರೈತರಿಂದ ಪಡೆಯುವುದಕ್ಕಾಗಿ ಅವರ ಬಳಿಗೆ ಒಬ್ಬ ಸೇವಕನನ್ನು ಕಳುಹಿಸಿದನು.</verse>
				<verse number="3">ಆದರೆ ಅವರು ಅವನನ್ನು ಹಿಡಿದು ಹೊಡೆದು, ಬರಿಗೈಯಲ್ಲಿ ಕಳುಹಿಸಿಬಿಟ್ಟರು.</verse>
				<verse number="4">ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ತಲೆಯನ್ನು ಗಾಯಗೊಳಿಸಿ ಅವಮಾನ ಮಾಡಿ ಕಳುಹಿಸಿಬಿಟ್ಟರು.</verse>
				<verse number="5">ಯಜಮಾನನು ಮತ್ತೊಬ್ಬ ಸೇವಕನನ್ನು ಕಳುಹಿಸಿದಾಗ ಅವರು ಅವನನ್ನು ಕೊಂದುಹಾಕಿದರು. ಯಜಮಾನನು ಬೇರೆ ಕೆಲವರನ್ನು ಕಳುಹಿಸಿದಾಗ ಅವರಲ್ಲಿ ಕೆಲವರನ್ನು ಹೊಡೆದರು, ಕೆಲವರನ್ನು ಕೊಂದುಹಾಕಿದರು.</verse>
				<verse number="6">“ಕಡೆಯದಾಗಿ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನಿದ್ದನು. ‘ಅವರು ನನ್ನ ಮಗನಿಗಾದರೂ ಮರ್ಯಾದೆ ಕೊಡುವರು,’ ಎಂದು ಭಾವಿಸಿ, ಅವನನ್ನು ಅವರ ಬಳಿಗೆ ಕಳುಹಿಸಿದನು.</verse>
				<verse number="7">“ಆದರೆ ಆ ರೈತರು, ‘ಇವನೇ ಬಾಧ್ಯಸ್ಥನು, ಬನ್ನಿರಿ, ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು,’ ಎಂದು ತಮ್ಮ ತಮ್ಮಲ್ಲಿ ಮಾತನಾಡಿಕೊಂಡರು.</verse>
				<verse number="8">ಅವರು ಅವನನ್ನು ಹಿಡಿದು ಕೊಂದುಹಾಕಿ ದ್ರಾಕ್ಷಿತೋಟದ ಹೊರಗೆ ಬಿಸಾಡಿದರು.</verse>
				<verse number="9">“ಹಾಗಾದರೆ ದ್ರಾಕ್ಷಿತೋಟದ ಯಜಮಾನನು ಅವರಿಗೆ ಏನು ಮಾಡುವನು? ಅವನು ಬಂದು ಆ ರೈತರನ್ನು ಸಂಹರಿಸಿ ದ್ರಾಕ್ಷಿಯ ತೋಟವನ್ನು ಬೇರೆಯವರಿಗೆ ಕೊಡುವನು.</verse>
				<verse number="10">ಈ ಪವಿತ್ರ ವಾಕ್ಯವನ್ನು ನೀವು ಓದಲಿಲ್ಲವೋ: “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.</verse>
				<verse number="11">ಇದು ಕರ್ತನಿಂದಲೇ ಆಯಿತು. ಇದು ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆ,’ ” ಎಂದು ಹೇಳಿದರು.</verse>
				<verse number="12">ಆಗ ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ತಮ್ಮ ವಿರೋಧವಾಗಿಯೇ ಈ ಸಾಮ್ಯವನ್ನು ಹೇಳಿದರೆಂದು ತಿಳಿದು ಯೇಸುವನ್ನು ಹಿಡಿಯುವುದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿ, ಯೇಸುವನ್ನು ಬಿಟ್ಟು ಹೊರಟು ಹೋದರು.</verse>
				<verse number="13">ಆಮೇಲೆ ಅವರು ಯೇಸುವನ್ನು ಅವರ ಮಾತುಗಳಲ್ಲಿ ಹಿಡಿಯಬೇಕೆಂದು ಫರಿಸಾಯರಲ್ಲಿಯೂ ಹೆರೋದ್ಯರಲ್ಲಿಯೂ ಕೆಲವರನ್ನು ಅವರ ಬಳಿಗೆ ಕಳುಹಿಸಿದರು.</verse>
				<verse number="14">ಅವರು ಬಂದು ಯೇಸುವಿಗೆ, “ಬೋಧಕರೇ, ನೀವು ಸತ್ಯವಂತರು ಮತ್ತು ಯಾವ ಮನುಷ್ಯನನ್ನೂ ಲಕ್ಷಿಸದವರೂ ನೀವು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀರಿ ಎಂದೂ ನಾವು ಬಲ್ಲೆವು. ಕೈಸರನಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಇಲ್ಲವೋ?</verse>
				<verse number="15">ನಾವು ಕೊಡಬೇಕೋ? ಕೊಡಬಾರದೋ?” ಎಂದು ಕೇಳಿದರು. ಆದರೆ ಯೇಸು ಅವರ ಕಪಟವನ್ನು ತಿಳಿದು ಅವರಿಗೆ, “ನೀವು ನನ್ನನ್ನೇಕೆ ಪರೀಕ್ಷಿಸುತ್ತೀರಿ? ಒಂದು ಬೆಳ್ಳಿ ನಾಣ್ಯವನ್ನು ತಂದು ನನಗೆ ತೋರಿಸಿರಿ,” ಎಂದು ಹೇಳಿದರು.</verse>
				<verse number="16">ಅವರು ಅದನ್ನು ತಂದಾಗ ಯೇಸು ಅವರಿಗೆ, “ಇದರ ಮುಖ ಮುದ್ರೆಯು ಮತ್ತು ಮೆಲ್ಬರಹವು ಯಾರದು?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು,” ಎಂದು ಉತ್ತರಕೊಟ್ಟರು.</verse>
				<verse number="17">ಆಗ ಯೇಸು ಉತ್ತರವಾಗಿ ಅವರಿಗೆ, “ಕೈಸರನಿಗೆ ಸಲ್ಲತಕ್ಕದ್ದನ್ನು ಕೈಸರನಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದು ಹೇಳಿದರು. ಇದಕ್ಕೆ ಅವರು ಯೇಸುವಿನ ವಿಷಯವಾಗಿ ಆಶ್ಚರ್ಯಪಟ್ಟರು.</verse>
				<verse number="18">ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವ ಸದ್ದುಕಾಯರು ಯೇಸುವಿನ ಬಳಿಗೆ ಬಂದು,</verse>
				<verse number="19">“ಬೋಧಕರೇ, ‘ಒಬ್ಬ ಮನುಷ್ಯನ ಸಹೋದರನು ಮಕ್ಕಳಿಲ್ಲದೆ ವಿಧವೆಯನ್ನು ಬಿಟ್ಟು ಸತ್ತರೆ, ಅವನ ಸಹೋದರನು ಅವನ ಹೆಂಡತಿಯನ್ನು ತೆಗೆದುಕೊಂಡು ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕು’ ಎಂದು ಮೋಶೆಯು ನಮಗೆ ಬರೆದಿರುತ್ತಾನಷ್ಟೆ.</verse>
				<verse number="20">ಏಳುಮಂದಿ ಸಹೋದರರಿದ್ದರು. ಮೊದಲನೆಯವನು ಮದುವೆಯಾಗಿ ಸಂತಾನವಿಲ್ಲದೆ ಮೃತಪಟ್ಟನು.</verse>
				<verse number="21">ಎರಡನೆಯವನೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಮೃತನಾದನು. ಅದರಂತೆಯೇ ಮೂರನೆಯವನೂ ಆದನು.</verse>
				<verse number="22">ಹೀಗೆ ಏಳುಮಂದಿಯೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದವರಾಗಿ ಮೃತರಾದರು. ಕೊನೆಯಲ್ಲಿ ಆ ಸ್ತ್ರೀಯೂ ಸಹ ಮರಣಹೊಂದಿದಳು.</verse>
				<verse number="23">ಹಾಗಾದರೆ, ಪುನರುತ್ಥಾನದಲ್ಲಿ ಅವರು ಜೀವಂತವಾಗಿ ಎದ್ದಾಗ ಅವರಲ್ಲಿ ಆಕೆಯು ಯಾರ ಪತ್ನಿಯಾಗಿರುವಳು? ಏಕೆಂದರೆ ಏಳುಮಂದಿಯೂ ಅವಳನ್ನು ಮದುವೆ ಮಾಡಿಕೊಂಡಿದ್ದರಲ್ಲಾ,” ಎಂದು ಪ್ರಶ್ನಿಸಿದರು.</verse>
				<verse number="24">ಅದಕ್ಕೆ ಯೇಸು, “ನೀವು ಪವಿತ್ರ ವೇದವನ್ನಾಗಲಿ ದೇವರ ಶಕ್ತಿಯನ್ನಾಗಲಿ ಅರ್ಥ ಮಾಡಿಕೊಳ್ಳದೆ ತಪ್ಪುತ್ತಿದ್ದಿರಲ್ಲವೇ?</verse>
				<verse number="25">ಅವರು ಸತ್ತವರೊಳಗಿಂದ ಜೀವಂತವಾಗಿ ಎದ್ದ ಮೇಲೆ, ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.</verse>
				<verse number="26">ಸತ್ತವರು ಎದ್ದು ಬರುವುದರ ವಿಷಯವಾಗಿ, ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ’ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದರೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?</verse>
				<verse number="27">ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ, ಆದ್ದರಿಂದ ಈ ವಿಷಯದಲ್ಲಿ ನೀವು ಬಹಳವಾಗಿ ತಪ್ಪುಮಾಡುತ್ತೀರಿ,” ಎಂದು ಹೇಳಿದರು.</verse>
				<verse number="28">ನಿಯಮ ಬೋಧಕರಲ್ಲಿ ಒಬ್ಬನು ಬಂದು ಅವರು ಕೂಡಿಕೊಂಡು ತರ್ಕಿಸುತ್ತಿರುವುದನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಅವರಿಗೆ, “ಎಲ್ಲಾ ಆಜ್ಞೆಗಳಲ್ಲಿ ಮೊದಲನೆಯದು ಯಾವುದು?” ಎಂದು ಕೇಳಿದನು.</verse>
				<verse number="29">ಯೇಸು ಉತ್ತರವಾಗಿ ಅವನಿಗೆ, “ಎಲ್ಲಾ ಆಜ್ಞೆಗಳಲ್ಲಿ ಮೊದಲನೆಯದು, ‘ಇಸ್ರಾಯೇಲೇ, ಕೇಳು: ನಮ್ಮ ದೇವರಾದ ಕರ್ತ ಒಬ್ಬರೇ ಕರ್ತನಾಗಿದ್ದಾರೆ.</verse>
				<verse number="30">ನೀನು ನಿನ್ನ ದೇವರನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಮನಸ್ಸಿನಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು?’</verse>
				<verse number="31">‘ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು,’ ಎಂಬುದು ಅದರಂತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿಗಿಂತ ಹೆಚ್ಚಿನ ಆಜ್ಞೆಯು ಮತ್ತೊಂದಿಲ್ಲ,” ಎಂದು ಹೇಳಿದರು.</verse>
				<verse number="32">ಅದಕ್ಕೆ ಆ ನಿಯಮ ಬೋಧಕನು ಯೇಸುವಿಗೆ, “ಬೋಧಕರೇ, ಚೆನ್ನಾಗಿ ಹೇಳಿದಿರಿ. ನೀವು ಹೇಳಿದ್ದು ಸತ್ಯವೇ; ಏಕೆಂದರೆ ದೇವರು ಒಬ್ಬರೇ, ಅವರ ಹೊರತು ಬೇರೊಬ್ಬರು ಇಲ್ಲ.</verse>
				<verse number="33">ಅವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ಪ್ರೀತಿಸಿ, ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸುವುದು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಗಳಿಗಿಂತಲೂ ಹೆಚ್ಚಿನದಾಗಿದೆ,” ಎಂದನು.</verse>
				<verse number="34">ಅವನು ವಿವೇಕದಿಂದ ಉತ್ತರ ಕೊಟ್ಟದ್ದನ್ನು ಯೇಸು ಕಂಡು ಅವನಿಗೆ, “ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ,” ಎಂದರು. ಅಂದಿನಿಂದ ಯೇಸುವನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.</verse>
				<verse number="35">ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ, “ಕ್ರಿಸ್ತನು ದಾವೀದನ ಪುತ್ರನು ಎಂದು ನಿಯಮ ಬೋಧಕರು ಹೇಳುತ್ತಿರುವುದು ಹೇಗೆ?</verse>
				<verse number="36">ದಾವೀದನು ತಾನೇ ಪವಿತ್ರಾತ್ಮ ಪ್ರೇರಣೆಯಿಂದ ಹೇಳಿದ್ದೇನೆಂದರೆ: “ ‘ಕರ್ತದೇವರು ನನ್ನ ಕರ್ತದೇವರಿಗೆ ಹೇಳಿದ್ದಾರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದದಡಿಯಲ್ಲಿ ಹಾಕುವವರೆಗೆ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು.” ’</verse>
				<verse number="37">ಆದ್ದರಿಂದ ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರೇ’ ಎಂದು ಕರೆಯುವಾಗ, ಆತನು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದರು. ಜನಸಮೂಹವು ಸಂತೋಷದಿಂದ ಯೇಸುವಿನ ಮಾತುಗಳನ್ನು ಆಲಿಸುತ್ತಿತ್ತು.</verse>
				<verse number="38">ಯೇಸು ಬೋಧನೆಮಾಡುತ್ತಾ, “ನಿಯಮ ಬೋಧಕರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಯನ್ನು ತೊಟ್ಟುಕೊಂಡು ತಿರುಗಾಡುವುದಕ್ಕೆ ಬಯಸುವವರೂ ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ</verse>
				<verse number="39">ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಇಷ್ಟಪಡುತ್ತಾರೆ.</verse>
				<verse number="40">ಇವರು ವಿಧವೆಯರ ಮನೆಗಳನ್ನು ದೋಚಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ, ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು,” ಎಂದರು.</verse>
				<verse number="41">ಯೇಸು ಕಾಣಿಕೆ ಪೆಟ್ಟಿಗೆಯ ಎದುರಾಗಿ ಕುಳಿತುಕೊಂಡು ಜನರು ಹೇಗೆ ಅದರಲ್ಲಿ ಹಣ ಹಾಕುತ್ತಿದ್ದಾರೆಂಬುದನ್ನು ಗಮನಿಸುತ್ತಿದ್ದರು. ಅನೇಕ ಐಶ್ವರ್ಯವಂತರು ಹೆಚ್ಚು ಹಣ ಹಾಕಿದರು.</verse>
				<verse number="42">ಆದರೆ ಒಬ್ಬ ಬಡ ವಿಧವೆಯು ಬಂದು ಎರಡು ಚಿಕ್ಕ ನಾಣ್ಯಗಳನ್ನು ಹಾಕಿದಳು.</verse>
				<verse number="43">ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.</verse>
				<verse number="44">ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈಕೆಯು ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದುದನ್ನು ಹಾಕಿದ್ದಾಳೆ,” ಎಂದರು.</verse>
			</chapter>
			<chapter number="13">
				<verse number="1">ಯೇಸು ದೇವಾಲಯದೊಳಗಿಂದ ಹೊರಗೆ ಹೋಗುತ್ತಿದ್ದಾಗ ಅವರ ಶಿಷ್ಯರಲ್ಲಿ ಒಬ್ಬನು ಯೇಸುವಿಗೆ, “ಬೋಧಕರೇ, ಇಲ್ಲಿ ಎಂಥಾ ಭಾರಿ ಕಲ್ಲುಗಳು ಮತ್ತು ಎಂಥಾ ಮಹಾ ಕಟ್ಟಡಗಳು ಇವೆ ನೋಡಿರಿ!” ಎಂದನು.</verse>
				<verse number="2">ಯೇಸು ಅವನಿಗೆ ಉತ್ತರವಾಗಿ, “ನೀನು ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯೋ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲಾಗುವವು,” ಎಂದರು.</verse>
				<verse number="3">ಯೇಸು ಓಲಿವ್ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ ಇವರು ಪ್ರತ್ಯೇಕವಾಗಿ ಯೇಸುವಿಗೆ,</verse>
				<verse number="4">“ಇವೆಲ್ಲಾ ಯಾವಾಗ ಆಗುವವು? ಇವೆಲ್ಲವೂ ನೆರವೇರುವುದಕ್ಕೆ ಸೂಚನೆ ಏನು? ನಮಗೆ ಹೇಳು,” ಎಂದು ಕೇಳಿದರು.</verse>
				<verse number="5">ಯೇಸು ಅವರಿಗೆ ಹೀಗೆಂದನು, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಾಗಿರಿ.</verse>
				<verse number="6">ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಕ್ರಿಸ್ತನು’ ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು.</verse>
				<verse number="7">ಇದಲ್ಲದೆ ಯುದ್ಧಗಳನ್ನೂ, ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಏಕೆಂದರೆ ಇವೆಲ್ಲವು ಸಂಭವಿಸುವುದು ಅಗತ್ಯ. ಆದರೆ ಇದು ಇನ್ನೂ ಅಂತ್ಯವಲ್ಲ.</verse>
				<verse number="8">ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಬರಗಾಲಗಳು ಉಂಟಾಗುವವು, ಇವು ಪ್ರಸವವೇದನೆಯ ಪ್ರಾರಂಭ ಮಾತ್ರ.</verse>
				<verse number="9">“ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು, ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ನನ್ನ ನಿಮಿತ್ತವಾಗಿ ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಿಸುವರು. ಹೀಗೆ ಇದು ಅವರಿಗೆ ಸಾಕ್ಷಿಯಾಗಿರುವುದು.</verse>
				<verse number="10">ಸುವಾರ್ತೆಯು ಮೊದಲು ಎಲ್ಲಾ ಜನಾಂಗಗಳಲ್ಲಿ ಸಾರುವುದು ಅಗತ್ಯವಾಗಿದೆ.</verse>
				<verse number="11">ಅವರು ನಿಮ್ಮನ್ನು ಬಂಧಿಸಿ ಒಪ್ಪಿಸುವುದಕ್ಕಾಗಿ ತೆಗೆದುಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬುದನ್ನು ಮುಂಚಿತವಾಗಿಯೇ ಚಿಂತಿಸಬೇಡಿರಿ. ಆ ಗಳಿಗೆಯಲ್ಲಿ ನಿಮ್ಮ ಮನಸ್ಸಿನಲ್ಲಿ ನಿಮಗೆ ಯಾವುದು ಕೊಡಲಾಗುವುದೋ ಅದನ್ನೇ ಮಾತನಾಡಿರಿ. ಏಕೆಂದರೆ ಮಾತನಾಡುವವರು ನೀವಲ್ಲ, ಪವಿತ್ರಾತ್ಮನೇ.</verse>
				<verse number="12">“ಸಹೋದರನು ತನ್ನ ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.</verse>
				<verse number="13">ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ದ್ವೇಷಮಾಡುವರು. ಆದರೆ ಕೊನೆಯವರೆಗೂ ತಾಳುವವನೇ ರಕ್ಷಣೆಹೊಂದುವನು.</verse>
				<verse number="14">“ಆದರೆ ‘ಅಸಹ್ಯ ವಸ್ತು’ ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ ಓದುವವನು ತಿಳಿದುಕೊಳ್ಳಲಿ. ಆಗ ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.</verse>
				<verse number="15">ಮಾಳಿಗೆಯ ಮೇಲಿದ್ದವರು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದಿರಲಿ; ತಮ್ಮ ಮನೆಯೊಳಗೆ ಪ್ರವೇಶಿಸಿ ಅದರೊಳಗಿಂದ ಏನನ್ನೂ ತೆಗೆದುಕೊಳ್ಳದಿರಲಿ.</verse>
				<verse number="16">ಹೊಲದಲ್ಲಿರುವವರು ಬಟ್ಟೆಗಳನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗದಿರಲಿ.</verse>
				<verse number="17">ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ!</verse>
				<verse number="18">ಈ ಸಂಕಟ ಚಳಿಗಾಲದಲ್ಲಿ ಆಗದಂತೆ ನೀವು ಪ್ರಾರ್ಥಿಸಿರಿ.</verse>
				<verse number="19">ಆ ದಿವಸಗಳಲ್ಲಿ ಮಹಾ ಸಂಕಟವಿರುವುದು, ದೇವರು ಜಗತ್ತನ್ನು ಸೃಷ್ಟಿಸಿದ ದಿನದಿಂದ ಮೊದಲುಗೊಂಡು ಈ ಸಮಯದವರೆಗೂ ಅಂಥ ಸಂಕಟವು ಆಗಲಿಲ್ಲ. ಇನ್ನು ಮುಂದೆಯೂ ಆಗುವುದಿಲ್ಲ.</verse>
				<verse number="20">“ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾರೂ ತಪ್ಪಿಹೋಗುವುದಿಲ್ಲ. ಆದರೆ ತಾನು ಆಯ್ಕೆಯಾದವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿದ್ದಾರೆ.</verse>
				<verse number="21">ಆಗ ಯಾರಾದರೂ ನಿಮಗೆ, ‘ಇಗೋ, ಕ್ರಿಸ್ತನು ಇಲ್ಲಿದ್ದಾನೆ, ಅಗೋ, ಆತನು ಅಲ್ಲಿದ್ದಾನೆ,’ ಎಂದು ಹೇಳಿದರೆ ನಂಬಬೇಡಿರಿ.</verse>
				<verse number="22">ಏಕೆಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು, ಸಾಧ್ಯವಾದರೆ ಆಯ್ಕೆಯಾದವರನ್ನು ಸಹ ಮೋಸಗೊಳಿಸುವಂತೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.</verse>
				<verse number="23">ಆದರೆ ನೀವು ಜಾಗರೂಕರಾಗಿರಿ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿಯೆ ಹೇಳಿದ್ದೇನೆ.</verse>
				<verse number="24">“ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ, “ ‘ಸೂರ್ಯನಿಗೆ ಕತ್ತಲು ಮುಸುಕುವುದು; ಚಂದ್ರನು ಕಾಂತಿಹೀನನಾಗುವನು.</verse>
				<verse number="25">ಆಕಾಶದಿಂದ ನಕ್ಷತ್ರಗಳು ಬೀಳುವವು ಮತ್ತು ಆಕಾಶದ ಶಕ್ತಿಗಳು ಕದಲುವವು.’</verse>
				<verse number="26">“ಆಗ ಮನುಷ್ಯಪುತ್ರನಾದ ನಾನು ಬಹು ಶಕ್ತಿಯಿಂದಲೂ ಮಹಿಮೆಯಿಂದಲೂ ಮೇಘಗಳಲ್ಲಿ ಬರುವುದನ್ನು ಅವರು ಕಾಣುವರು.</verse>
				<verse number="27">ನಾನು ನನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ನಾನು ಆರಿಸಿಕೊಂಡವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವೆನು.</verse>
				<verse number="28">“ಅಂಜೂರದ ಮರದ ಸಾಮ್ಯದಿಂದ ಈ ಪಾಠವನ್ನು ಕಲಿತುಕೊಳ್ಳಿರಿ: ಅದರ ರೆಂಬೆ ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳುತ್ತೀರಿ.</verse>
				<verse number="29">ಅದೇ ಪ್ರಕಾರ ಇವೆಲ್ಲವೂ ಸಂಭವಿಸುವುದನ್ನು ನೀವು ಕಾಣುವಾಗ, ಮನುಷ್ಯಪುತ್ರನಾದ ನಾನು ಬಾಗಿಲ ಹತ್ತಿರದಲ್ಲಿಯೇ ಇದ್ದೇನೆ ಎಂದು ತಿಳಿದುಕೊಳ್ಳಿರಿ.</verse>
				<verse number="30">ಇವೆಲ್ಲವೂ ನೆರವೇರುವವರೆಗೆ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.</verse>
				<verse number="31">ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.</verse>
				<verse number="32">“ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ತಂದೆಗೆ ಹೊರತು ಯಾವ ಮನುಷ್ಯನಿಗಾಗಲಿ, ಪರಲೋಕದಲ್ಲಿರುವ ದೂತರಿಗಾಗಲಿ, ಪುತ್ರನಿಗಾಗಲಿ ತಿಳಿಯದು.</verse>
				<verse number="33">ನೀವು ಎಚ್ಚರವಾಗಿರಿ, ಜಾಗರೂಕರಾಗಿರಿ. ಏಕೆಂದರೆ ಆ ಕಾಲವು ಬರುವುದು ಯಾವಾಗ ಎಂದು ನಿಮಗೆ ತಿಳಿಯದು.</verse>
				<verse number="34">ಅದು ಒಬ್ಬ ಮನುಷ್ಯನು ದೂರ ಪ್ರಯಾಣಕ್ಕಾಗಿ ತನ್ನ ಮನೆಯನ್ನು ಬಿಟ್ಟು, ತನ್ನ ಸೇವಕರಿಗೆ ಅಧಿಕಾರವನ್ನೂ ಪ್ರತಿಯೊಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಿಲು ಕಾಯುವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ ಎಂದು ನಾನು ನಿಮಗೆ ಹೇಳುತ್ತಿದ್ದೇನೆ.</verse>
				<verse number="35">“ಆದ್ದರಿಂದ ಜಾಗರೂಕರಾಗಿರಿ. ಮನೆಯಜಮಾನನು ಸಂಜೆಯಲ್ಲಿಯೋ ಮಧ್ಯರಾತ್ರಿಯಲ್ಲಿಯೋ ಹುಂಜ ಕೂಗುವಾಗಲೋ ಬೆಳಕಾಗುವಾಗಲೋ, ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ.</verse>
				<verse number="36">ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವುದನ್ನು ಕಂಡಾನು.</verse>
				<verse number="37">ನಿಮಗೆ ಹೇಳುವುದನ್ನು ನಾನು ಎಲ್ಲರಿಗೂ ಹೇಳುತ್ತೇನೆ: ‘ಎಚ್ಚರವಾಗಿರಿ,’ ” ಎಂದರು.</verse>
			</chapter>
			<chapter number="14">
				<verse number="1">ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿವಸಗಳಿದ್ದಾಗ, ಮುಖ್ಯಯಾಜಕರೂ ನಿಯಮ ಬೋಧಕರೂ ಉಪಾಯದಿಂದ ಯೇಸುವನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಮಾರ್ಗ ಹುಡುಕುತ್ತಿದ್ದರು.</verse>
				<verse number="2">ಆದರೆ ಅವರು, “ಜನರು ದಂಗೆ ಎದ್ದಾರು, ಹಬ್ಬದಲ್ಲಿ ಬೇಡ,” ಎಂದು ಮಾತನಾಡಿಕೊಂಡರು.</verse>
				<verse number="3">ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ಮೂಲಿಕೆಯ ಸುಗಂಧ ತೈಲದ ಭರಣಿಯನ್ನು ತೆಗೆದುಕೊಂಡು ಬಂದು, ಅದನ್ನು ಒಡೆದು, ಯೇಸುವಿನ ತಲೆಯ ಮೇಲೆ ಸುರಿಸಿದಳು.</verse>
				<verse number="4">ಅಲ್ಲಿದ್ದ ಕೆಲವರು ತಮ್ಮೊಳಗೆ ಕೋಪಗೊಂಡು, “ಈ ತೈಲವನ್ನು ಹೀಗೆ ವ್ಯರ್ಥ ಮಾಡಿದ್ದೇಕೆ?</verse>
				<verse number="5">ಇದನ್ನು ಮುನ್ನೂರು ಬೆಳ್ಳಿ ನಾಣ್ಯಗಿಂತ ಹೆಚ್ಚಿನ ಬೆಲೆಗೆ ಮಾರಿ ಬಡವರಿಗೆ ಕೊಡಬಹುದಾಗಿತ್ತಲ್ಲಾ?” ಎಂದು ಆಕೆಯನ್ನು ನಿಂದಿಸಿದರು.</verse>
				<verse number="6">ಆದರೆ ಯೇಸು, “ಈಕೆಯನ್ನು ಬಿಟ್ಟುಬಿಡಿರಿ, ಈಕೆಗೆ ಏಕೆ ತೊಂದರೆ ಕೊಡುತ್ತೀರಿ? ಈಕೆಯು ನನಗೆ ಒಳ್ಳೆಯ ಕಾರ್ಯವನ್ನೇ ಮಾಡಿದ್ದಾಳೆ.</verse>
				<verse number="7">ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ನಿಮಗೆ ಮನಸ್ಸಿದ್ದರೆ, ನೀವು ಅವರಿಗೆ ಯಾವಾಗಲಾದರೂ ಉಪಕಾರ ಮಾಡಬಹುದು. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ.</verse>
				<verse number="8">ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ನನ್ನ ಶವಸಂಸ್ಕಾರಕ್ಕಾಗಿ ಮುಂಚಿತವಾಗಿ ನನ್ನ ದೇಹವನ್ನು ಅಭಿಷೇಕಿಸಿದ್ದಾಳೆ.</verse>
				<verse number="9">ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಲೋಕದಾದ್ಯಂತ ಎಲ್ಲೆಲ್ಲಿ ಸುವಾರ್ತೆಯು ಸಾರಲಾಗುವದೋ, ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದನ್ನು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲಾಗುವುದು,” ಎಂದರು.</verse>
				<verse number="10">ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು.</verse>
				<verse number="11">ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುವುದಾಗಿ ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಸಂದರ್ಭ ಹುಡುಕುತ್ತಿದ್ದನು.</verse>
				<verse number="12">ಅಂದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಯನ್ನು ವಧಿಸುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀವು ಪಸ್ಕದ ಊಟ ಮಾಡಲು ನಾವು ಎಲ್ಲಿಗೆ ಹೋಗಿ ಅದನ್ನು ಸಿದ್ಧಪಡಿಸೋಣ?” ಎಂದು ಕೇಳಿದರು.</verse>
				<verse number="13">ಆಗ ಯೇಸು ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ, “ನೀವು ಪಟ್ಟಣದೊಳಕ್ಕೆ ಹೋಗಿರಿ. ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.</verse>
				<verse number="14">ಅವನು ಯಾವ ಮನೆಯೊಳಗೆ ಹೋಗುತ್ತಾನೋ ಆ ಮನೆಯ ಯಜಮಾನನಿಗೆ, ‘ನಾನು ನನ್ನ ಶಿಷ್ಯರೊಂದಿಗೆ ಪಸ್ಕಭೋಜನ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ? ಎಂದು ಬೋಧಕರು ನಿನ್ನನ್ನು ಕೇಳುತ್ತಾರೆ,’ ಎಂದು ಹೇಳಿರಿ.</verse>
				<verse number="15">ಅವನು ಸಜ್ಜುಗೊಳಿಸಿ ಸಿದ್ಧಮಾಡಿದ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಸಿದ್ಧಮಾಡಿರಿ,” ಎಂದರು.</verse>
				<verse number="16">ಅವರ ಶಿಷ್ಯರು ಹೊರಟುಹೋಗಿ ಪಟ್ಟಣದೊಳಕ್ಕೆ ಬಂದು ಯೇಸು ತಮಗೆ ಹೇಳಿದಂತೆಯೇ ಕಂಡು ಪಸ್ಕವನ್ನು ಸಿದ್ಧಮಾಡಿದರು.</verse>
				<verse number="17">ಸಂಜೆಯಾದಾಗ, ಯೇಸು ಹನ್ನೆರಡು ಮಂದಿ ಶಿಷ್ಯರ ಸಂಗಡ ಬಂದರು.</verse>
				<verse number="18">ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, “ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುವನು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು.</verse>
				<verse number="19">ಆಗ ಅವರು ದುಃಖಿಸಲಾರಂಭಿಸಿ ಒಬ್ಬೊಬ್ಬರಾಗಿ ಯೇಸುವಿಗೆ, “ಅವನು ನಾನಲ್ಲವಲ್ಲಾ?” ಎಂದು ಕೇಳಿದರು.</verse>
				<verse number="20">ಅದಕ್ಕೆ ಯೇಸು ಉತ್ತರವಾಗಿ ಅವರಿಗೆ, “ಅವನು ಹನ್ನೆರಡು ಮಂದಿಯಲ್ಲಿ ಒಬ್ಬನು. ಎಂದರೆ, ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದುವವನೇ.</verse>
				<verse number="21">ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೇ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದು ಹೇಳಿದರು.</verse>
				<verse number="22">ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ, ಮುರಿದು, ಅವರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ಇದು ನನ್ನ ದೇಹ,” ಎಂದರು.</verse>
				<verse number="23">ತರುವಾಯ ಯೇಸು ಪಾತ್ರೆಯನ್ನು ತೆಗೆದುಕೊಂಡು ಕೃತಜ್ಞತಾಸ್ತುತಿ ಮಾಡಿ ಅವರಿಗೆ ಕೊಟ್ಟರು. ಅವರೆಲ್ಲರೂ ಅದರಲ್ಲಿ ಕುಡಿದರು.</verse>
				<verse number="24">ಯೇಸು ಅವರಿಗೆ, “ಇದು ಬಹುಜನರಿಗೋಸ್ಕರ ಸುರಿಸಲಾಗುವ ಹೊಸ ಒಡಂಬಡಿಕೆಯ ನನ್ನ ರಕ್ತ.</verse>
				<verse number="25">ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದವರೆಗೆ ಇನ್ನು ಮೇಲೆ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದು ಹೇಳಿದರು.</verse>
				<verse number="26">ಬಳಿಕ ಅವರೆಲ್ಲರು ಒಂದು ಕೀರ್ತನೆ ಹಾಡಿ ಓಲಿವ್ ಗುಡ್ಡಕ್ಕೆ ಹೊರಟು ಹೋದರು.</verse>
				<verse number="27">ಆಗ ಯೇಸು, “ನೀವೆಲ್ಲರೂ ಓಡಿಹೋಗುವಿರಿ. ಏಕೆಂದರೆ ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಹೋಗುವುವು.’</verse>
				<verse number="28">ಆದರೆ ನಾನು ಎದ್ದ ಮೇಲೆ ನಿಮಗಿಂತ ಮುಂದಾಗಿ ಗಲಿಲಾಯಕ್ಕೆ ಹೋಗುವೆನು,” ಎಂದು ಹೇಳಿದರು.</verse>
				<verse number="29">ಪೇತ್ರನು ಯೇಸುವಿಗೆ, “ಎಲ್ಲರೂ ನಿಮ್ಮನ್ನು ಬಿಟ್ಟು ಹೋದರೂ ನಾನು ನಿಮ್ಮನ್ನು ಬಿಟ್ಟು ಹೋಗುವುದಿಲ್ಲ,” ಎಂದು ಹೇಳಿದನು.</verse>
				<verse number="30">ಆದರೆ ಯೇಸು ಅವನಿಗೆ, “ಈ ದಿವಸ, ಈ ರಾತ್ರಿಯೇ ಎರಡು ಸಾರಿ ಹುಂಜ ಕೂಗುವುದಕ್ಕಿಂತ ಮೊದಲು ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ,” ಎಂದರು.</verse>
				<verse number="31">ಅದಕ್ಕೆ ಪೇತ್ರನು, “ನಾನು ನಿಮ್ಮೊಂದಿಗೆ ಸಾಯಬೇಕಾದರೂ ನಿಮ್ಮನ್ನು ನಿರಾಕರಿಸುವುದೇ ಇಲ್ಲ,” ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು.</verse>
				<verse number="32">ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಅಲ್ಲಿ ಯೇಸು ತಮ್ಮ ಶಿಷ್ಯರಿಗೆ, “ನಾನು ಪ್ರಾರ್ಥನೆಮಾಡಿ ಬರುವವರೆಗೆ ನೀವು ಇಲ್ಲಿ ಕುಳಿತುಕೊಂಡಿರಿ,” ಎಂದರು.</verse>
				<verse number="33">ಯೇಸು ಪೇತ್ರ, ಯಾಕೋಬ, ಯೋಹಾನರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗಿ, ಬಹು ಬೆರಗಾಗಿ ವ್ಯಥೆಗೊಳ್ಳಲಾರಂಭಿಸಿ,</verse>
				<verse number="34">“ನನ್ನ ಪ್ರಾಣವು ಸಾಯುವಷ್ಟು ತೀವ್ರವಾದ ದುಃಖಕ್ಕೆ ಒಳಗಾಗಿದೆ. ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರಿ,” ಎಂದರು.</verse>
				<verse number="35">ಯೇಸು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿ,</verse>
				<verse number="36">“ಅಪ್ಪಾ, ತಂದೆಯೇ, ಎಲ್ಲವೂ ನಿಮಗೆ ಸಾಧ್ಯ, ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು. ಆದರೂ ನನ್ನ ಚಿತ್ತದಂತಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.</verse>
				<verse number="37">ತರುವಾಯ ಯೇಸು ಬಂದು, ಶಿಷ್ಯರು ನಿದ್ರೆ ಮಾಡುವುದನ್ನು ಕಂಡು ಪೇತ್ರನಿಗೆ, “ಸೀಮೋನನೇ, ನೀನು ನಿದ್ರೆ ಮಾಡುತ್ತೀಯಾ? ಒಂದು ಘಂಟೆಯಾದರೂ ಎಚ್ಚರವಾಗಿರಲಾರೆಯಾ?</verse>
				<verse number="38">ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ. ಆತ್ಮವು ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ,” ಎಂದು ಹೇಳಿದರು.</verse>
				<verse number="39">ಯೇಸು ತಿರುಗಿ ಹೊರಟುಹೋಗಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದರು.</verse>
				<verse number="40">ಯೇಸು ಹಿಂತಿರುಗಿದಾಗ, ಅವರು ತಿರುಗಿ ನಿದ್ರೆ ಮಾಡುವುದನ್ನು ಕಂಡರು. ಅವರ ಕಣ್ಣುಗಳು ಭಾರವಾಗಿದ್ದವು. ಯೇಸುವಿಗೆ ಏನು ಉತ್ತರಕೊಡಬೇಕೆಂದು ಅವರಿಗೆ ತಿಳಿಯಲಿಲ್ಲ.</verse>
				<verse number="41">ಯೇಸು ಮೂರನೆಯ ಸಾರಿ ಬಂದು ಅವರಿಗೆ, “ಇನ್ನೂ ವಿಶ್ರಮಿಸುತ್ತಿದ್ದೀರಾ? ಸಾಕು! ಸಮಯವು ಸಮೀಪಿಸಿದೆ; ಮನುಷ್ಯಪುತ್ರನಾದ ನಾನು ಪಾಪಿಗಳ ಕೈವಶವಾಗಲಿದ್ದೇನೆ.</verse>
				<verse number="42">ಏಳಿರಿ ಹೋಗೋಣ. ಇಗೋ, ನನಗೆ ದ್ರೋಹಬಗೆಯುವವನು ಸಮೀಪದಲ್ಲಿ ಇದ್ದಾನೆ,” ಎಂದು ಹೇಳಿದರು.</verse>
				<verse number="43">ಯೇಸು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ, ನಿಯಮ ಬೋಧಕರ ಮತ್ತು ಹಿರಿಯರ ಕಡೆಯಿಂದ ಬಂದಿದ್ದ ಜನರ ಸಮೂಹವು ಖಡ್ಗ ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗಿತ್ತು.</verse>
				<verse number="44">ಯೇಸುವಿಗೆ ದ್ರೋಹಮಾಡುವುದಕ್ಕಿದ್ದವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಆತನೇ ಯೇಸು, ಆತನನ್ನು ಹಿಡಿದು, ಭದ್ರವಾಗಿ ತೆಗೆದುಕೊಂಡು ಹೋಗಿರಿ,” ಎಂದು ಗುರುತು ಹೇಳಿಕೊಟ್ಟಿದ್ದನು.</verse>
				<verse number="45">ಯೂದನು ಬಂದ ಕೂಡಲೇ ನೇರವಾಗಿ ಯೇಸುವಿನ ಕಡೆಗೆ ಹೋಗಿ, “ಗುರುವೇ,” ಎಂದು ಹೇಳಿ ಅವರಿಗೆ ಮುದ್ದಿಟ್ಟನು.</verse>
				<verse number="46">ಅವರು ಯೇಸುವಿನ ಮೇಲೆ ಕೈಹಾಕಿ ಅವರನ್ನು ಬಂಧಿಸಿದರು.</verse>
				<verse number="47">ಆದರೆ ಹತ್ತಿರ ನಿಂತಿದ್ದವರಲ್ಲಿ ಒಬ್ಬನು ಖಡ್ಗವನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು.</verse>
				<verse number="48">ಯೇಸು ಅವರಿಗೆ, “ಖಡ್ಗಗಳನ್ನು ಮತ್ತು ದೊಣ್ಣೆಗಳನ್ನು ತೆಗೆದುಕೊಂಡು ದಂಗೆಗಾರನನ್ನು ಹಿಡಿಯುವುದಕ್ಕಾಗಿ ಬರುವಂತೆ ನನ್ನನ್ನು ಹಿಡಿಯುವುದಕ್ಕಾಗಿ ಬಂದಿರಾ?</verse>
				<verse number="49">ನಾನು ಪ್ರತಿದಿನವೂ ದೇವಾಲಯದಲ್ಲಿ ಬೋಧಿಸುತ್ತಾ ನಿಮ್ಮ ಸಂಗಡ ಇದ್ದೆನು. ಆಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಪವಿತ್ರ ವೇದಗಳಲ್ಲಿ ಬರೆದಿದ್ದು ನೆರವೇರಲೇಬೇಕು,” ಎಂದರು.</verse>
				<verse number="50">ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು.</verse>
				<verse number="51">ಅಲ್ಲಿ ಮೈಮೇಲೆ ದುಪ್ಪಟಿಯನ್ನು ಸುತ್ತಿಕೊಂಡ ಯುವಕನೊಬ್ಬನು ಯೇಸುವನ್ನು ಹಿಂಬಾಲಿಸುತ್ತಿದ್ದನು. ಜನರ ಗುಂಪು ಅವನನ್ನು ಹಿಡಿಯಲು,</verse>
				<verse number="52">ಅವನು ಆ ದುಪ್ಪಟಿಯನ್ನು ಬಿಟ್ಟು, ಬರೀ ಮೈಯಲ್ಲಿ ಓಡಿಹೋದನು.</verse>
				<verse number="53">ಅವರು ಯೇಸುವನ್ನು ಮಹಾಯಾಜಕನ ಬಳಿಗೆ ತೆಗೆದುಕೊಂಡು ಹೋದರು. ಯೇಸುವಿನ ಸಂಗಡ ಮುಖ್ಯಯಾಜಕರೂ ಹಿರಿಯರೂ ನಿಯಮ ಬೋಧಕರೂ ಅವನ ಬಳಿಗೆ ಸಭೆ ಕೂಡಿಬಂದರು.</verse>
				<verse number="54">ಪೇತ್ರನು ಮಹಾಯಾಜಕನ ಅಂಗಳದವರೆಗೂ ದೂರದಿಂದಲೇ ಯೇಸುವನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳುತ್ತಿದ್ದನು.</verse>
				<verse number="55">ಮುಖ್ಯಯಾಜಕರೂ ಆಲೋಚನಾ ಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಅವರ ವಿರೋಧವಾಗಿ ಸಾಕ್ಷಿಯನ್ನು ಹುಡುಕಿದರು. ಆದರೆ ಒಂದು ಸಾಕ್ಷಿಯೂ ಸಿಗಲಿಲ್ಲ.</verse>
				<verse number="56">ಅನೇಕರು ಯೇಸುವಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿಯು ಒಂದಕ್ಕೊಂದು ಒಪ್ಪಲಿಲ್ಲ.</verse>
				<verse number="57">ತರುವಾಯ ಕೆಲವರು ಎದ್ದು ಯೇಸುವಿಗೆ ವಿರೋಧವಾಗಿ ಸಾಕ್ಷಿ ಹೇಳುತ್ತಾ,</verse>
				<verse number="58">“ ‘ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದನ್ನು ಮೂರು ದಿನಗಳಲ್ಲಿ ಕಟ್ಟುವೆನು,’ ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ,” ಎಂದರು.</verse>
				<verse number="59">ಹೀಗಿದ್ದರೂ ಅವರ ಸಾಕ್ಷಿ ಒಂದಕ್ಕೊಂದು ಒಪ್ಪಿಗೆಯಾಗಲಿಲ್ಲ.</verse>
				<verse number="60">ಆಗ ಮಹಾಯಾಜಕನು ಎದ್ದು ಮುಂದೆ ನಿಂತು ಯೇಸುವಿಗೆ, “ನೀನು ಏನೂ ಉತ್ತರ ಕೊಡುವುದಿಲ್ಲವೋ? ಇವರು ನಿನಗೆ ವಿರೋಧವಾಗಿ ಹೇಳುವ ಈ ಸಾಕ್ಷಿ ಏನು?” ಎಂದು ಕೇಳಿದನು.</verse>
				<verse number="61">ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದರು. ತಿರುಗಿ ಮಹಾಯಾಜಕನು, “ನೀನು ಭಾಗ್ಯವಂತನ ದೇವರ ಪುತ್ರನಾಗಿರುವ ಕ್ರಿಸ್ತನೋ?” ಎಂದು ಯೇಸುವನ್ನು ಕೇಳಿದನು.</verse>
				<verse number="62">ಅದಕ್ಕೆ ಯೇಸು, “ಹೌದು ನಾನೇ, ಇದಲ್ಲದೆ ಮನುಷ್ಯಪುತ್ರನಾದ ನಾನು ಸರ್ವಶಕ್ತರ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ಕಾಣುವಿರಿ,” ಎಂದರು.</verse>
				<verse number="63">ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇನ್ನು ನಮಗೆ ಸಾಕ್ಷಿಗಳ ಅವಶ್ಯಕತೆ ಏತಕ್ಕೆ?</verse>
				<verse number="64">ನೀವು ದೇವದೂಷಣೆಯನ್ನು ಕೇಳಿದ್ದೀರಲ್ಲಾ ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಲು ಅವರೆಲ್ಲರೂ, “ಈತನಿಗೆ ಮರಣದಂಡನೆ ಆಗಬೇಕು,” ಎಂದು ತೀರ್ಪುಕೊಟ್ಟರು.</verse>
				<verse number="65">ತರುವಾಯ ಕೆಲವರು ಯೇಸುವಿನ ಮೇಲೆ ಉಗುಳಿ ಅವರ ಕಣ್ಣಿಗೆ ಬಟ್ಟೆ ಕಟ್ಟಿ ಅವರನ್ನು ಗುದ್ದುವುದಕ್ಕೆ ಆರಂಭಿಸಿ ಯೇಸುವಿಗೆ, “ಪ್ರವಾದನೆ ಹೇಳು,” ಎಂದರು. ಕಾವಲಾಳುಗಳು ಯೇಸುವನ್ನು ಹಿಡಿದುಕೊಂಡುಹೋಗಿ ಅವರನ್ನು ಹೊಡೆದರು.</verse>
				<verse number="66">ಪೇತ್ರನು ಅಂಗಳದ ಕೆಳಭಾಗದಲ್ಲಿದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಅಲ್ಲಿಗೆ ಬಂದಳು.</verse>
				<verse number="67">ಪೇತ್ರನು ಚಳಿ ಕಾಯಿಸಿಕೊಳ್ಳುತ್ತಿರುವುದನ್ನು ಆಕೆಯು ಕಂಡು ಅವನನ್ನು ದೃಷ್ಟಿಸಿ ನೋಡಿ, “ನೀನು ಸಹ ಆ ನಜರೇತಿನ ಯೇಸುವಿನೊಂದಿಗೆ ಇದ್ದವನು,” ಎಂದಳು.</verse>
				<verse number="68">ಆದರೆ ಅವನು ನಿರಾಕರಿಸಿ, “ನೀನು ಏನು ಹೇಳುತ್ತೀಯೋ ಅದು ನನಗೆ ಗೊತ್ತಿಲ್ಲ ಅರ್ಥವಾಗುತ್ತಲೂ ಇಲ್ಲ,” ಎಂದು ಹೇಳಿ ಹೊರಗೆ ಮುಖ್ಯ ದ್ವಾರದೊಳಗೆ ಹೋದನು. ಆಗ ಹುಂಜವು ಕೂಗಿತು.</verse>
				<verse number="69">ಆ ದಾಸಿಯು ಅವನನ್ನು ತಿರುಗಿ ಕಂಡು ಪಕ್ಕದಲ್ಲಿ ನಿಂತಿದ್ದವರಿಗೆ, “ಇವನು ಅವರಲ್ಲಿ ಒಬ್ಬನು,” ಎಂದು ಹೇಳಲಾರಂಭಿಸಿದಳು.</verse>
				<verse number="70">ಆಗ ಪೇತ್ರನು ಅದನ್ನು ಮತ್ತೆ ನಿರಾಕರಿಸಿದನು. ಸ್ವಲ್ಪ ಹೊತ್ತಾದ ಮೇಲೆ ಪಕ್ಕದಲ್ಲಿ ನಿಂತಿದ್ದವರು ತಿರುಗಿ ಪೇತ್ರನಿಗೆ, “ನಿಶ್ಚಯವಾಗಿಯೂ ನೀನು ಸಹ ಅವರಲ್ಲಿ ಒಬ್ಬನು, ನೀನು ಗಲಿಲಾಯದವನೇ,” ಎಂದರು.</verse>
				<verse number="71">ಅವನು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಆರಂಭಿಸಿ, “ನೀವು ಮಾತನಾಡುತ್ತಿರುವ ಈ ಮನುಷ್ಯನನ್ನು ನಾನರಿಯೆ,” ಎಂದನು.</verse>
				<verse number="72">ಕೂಡಲೇ ಎರಡನೆಯ ಸಾರಿ ಹುಂಜ ಕೂಗಿತು. ಹೀಗೆ, “ಎರಡು ಸಾರಿ ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ನೀನು ನನ್ನನ್ನು ಮೂರು ಸಾರಿ ನಿರಾಕರಿಸುವೆ,” ಎಂದು ಯೇಸು ತನಗೆ ಹೇಳಿದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು ವ್ಯಥೆಪಟ್ಟು ಅತ್ತನು.</verse>
			</chapter>
			<chapter number="15">
				<verse number="1">ಬೆಳಗಾದ ಕೂಡಲೇ ಮುಖ್ಯಯಾಜಕರೂ ಹಿರಿಯರೂ ನಿಯಮ ಬೋಧಕರ ಮತ್ತು ಆಲೋಚನಾ ಸಭೆಯವರೊಂದಿಗೆ ಸಮಾಲೋಚನೆ ಮಾಡಿಕೊಂಡು ಯೇಸುವಿಗೆ ಬೇಡಿಹಾಕಿಸಿ ಪಿಲಾತನಿಗೆ ಒಪ್ಪಿಸಿದರು.</verse>
				<verse number="2">ಆಗ ಪಿಲಾತನು ಯೇಸುವಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಲು, “ನೀನೇ ಅದನ್ನು ಹೇಳಿದ್ದೀ” ಎಂದು ಯೇಸು ಉತ್ತರಿಸಿದರು.</verse>
				<verse number="3">ಇದಲ್ಲದೆ ಮುಖ್ಯಯಾಜಕರು ಯೇಸುವಿನ ಮೇಲೆ ಅನೇಕ ದೂರುಗಳನ್ನು ಹೇಳಿದರು.</verse>
				<verse number="4">ಆದರೆ ಪಿಲಾತನು ತಿರುಗಿ ಯೇಸುವಿಗೆ, “ನೀನು ಉತ್ತರ ಕೊಡುವುದಿಲ್ಲವೋ? ಇವರು ನಿನಗೆ ವಿರೋಧವಾಗಿ ಎಷ್ಟು ದೂರುಗಳನ್ನು ಹೇಳುತ್ತಾರೆ ನೋಡು,” ಎಂದು ಕೇಳಿದನು.</verse>
				<verse number="5">ಆದರೂ ಯೇಸು ಉತ್ತರ ಕೊಡದೆ ಇರಲಾಗಿ ಪಿಲಾತನು ಆಶ್ಚರ್ಯಪಟ್ಟನು.</verse>
				<verse number="6">ಹಬ್ಬದಲ್ಲಿ ಜನರು ಕೋರಿದ ಒಬ್ಬ ಸೆರೆಯಾಳನ್ನು ಅವರಿಗೆ ಬಿಟ್ಟುಕೊಡುವ ಪದ್ಧತಿಯಿತ್ತು.</verse>
				<verse number="7">ದಂಗೆ ಮಾಡಿದವರೊಂದಿಗೆ ಬಂಧಿಸಲಾದ ಆ ದಂಗೆಯಲ್ಲಿ ಕೊಲೆಮಾಡಿದ ಬರಬ್ಬನೆಂಬ ಹೆಸರುಳ್ಳವನೊಬ್ಬನು ಸೆರೆಯಲ್ಲಿ ಇದ್ದನು.</verse>
				<verse number="8">ಜನಸಮೂಹವು ಪಿಲಾತನು ತಮಗೆ ಯಾವಾಗಲೂ ಮಾಡುತ್ತಿದ್ದ ಪ್ರಕಾರ ಮಾಡಬೇಕೆಂದು ಅವನನ್ನು ಬೇಡಿಕೊಳ್ಳಲಾರಂಭಿಸಿದರು.</verse>
				<verse number="9">ಪಿಲಾತನು ಅವರಿಗೆ, “ಯೆಹೂದ್ಯರ ಅರಸನನ್ನು ನಿಮಗಾಗಿ ನಾನು ಬಿಡಿಸಬೇಕೋ?” ಎಂದು ಕೇಳಿದನು.</verse>
				<verse number="10">ಮುಖ್ಯಯಾಜಕರು ಹೊಟ್ಟೆಕಿಚ್ಚಿನಿಂದ ಯೇಸುವನ್ನು ಒಪ್ಪಿಸಿಕೊಟ್ಟಿದ್ದರೆಂದು ಪಿಲಾತನಿಗೆ ತಿಳಿದಿತ್ತು.</verse>
				<verse number="11">ಆದರೆ ಮುಖ್ಯಯಾಜಕರು ತಮಗೆ ಬರಬ್ಬನನ್ನೇ ಬಿಟ್ಟುಕೊಡಬೇಕೆಂದು ಜನರನ್ನು ಪ್ರೇರೇಪಿಸಿದರು.</verse>
				<verse number="12">ಪಿಲಾತನು ಅವರಿಗೆ, “ಹಾಗಾದರೆ ನೀವು ಯೆಹೂದ್ಯರ ಅರಸನೆಂದು ಕರೆಯುವ ಈತನಿಗೆ ನಾನೇನು ಮಾಡಬೇಕೆನ್ನುತ್ತೀರಿ?” ಎಂದು ಕೇಳಿದನು.</verse>
				<verse number="13">ಅವರು, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಮತ್ತೆ ಕೂಗಿಕೊಂಡರು.</verse>
				<verse number="14">ಆಗ ಪಿಲಾತನು ಅವರಿಗೆ, “ಏಕೆ? ಆತನು ಯಾವ ಅಪರಾಧ ಮಾಡಿದ್ದಾನೆ?” ಎಂದು ಕೇಳಲು ಅವರು, “ಆತನನ್ನು ಶಿಲುಬೆಗೆ ಹಾಕಿಸು,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡರು.</verse>
				<verse number="15">ಪಿಲಾತನು ಜನರನ್ನು ಮೆಚ್ಚಿಸಲು ಮನಸ್ಸುಳ್ಳವನಾಗಿ ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು.</verse>
				<verse number="16">ಸೈನಿಕರು ಯೇಸುವನ್ನು ರಾಜಭವನದ ಅಂಗಳದೊಳಕ್ಕೆ ತೆಗೆದುಕೊಂಡು ಬಂದು ತಮ್ಮ ದಳದವರನ್ನೆಲ್ಲಾ ಒಟ್ಟಾಗಿ ಕರೆದರು.</verse>
				<verse number="17">ಅವರು ಯೇಸುವಿಗೆ ಕಡುಗೆಂಪು ಬಣ್ಣದ ಮೇಲಂಗಿಯನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಅವರ ತಲೆಯ ಮೇಲೆ ಇಟ್ಟರು.</verse>
				<verse number="18">ತರುವಾಯ ಅವರು, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ,” ಎಂದರು.</verse>
				<verse number="19">ಅವರು ಬೆತ್ತದಿಂದ ಯೇಸುವಿನ ತಲೆಯ ಮೇಲೆ ಹೊಡೆದು, ಅವರ ಮೇಲೆ ಉಗುಳಿ ಮೊಣಕಾಲೂರಿ ಅವರಿಗೆ ನಮಸ್ಕರಿಸಿದರು.</verse>
				<verse number="20">ಹೀಗೆ ಅವರು ಯೇಸುವನ್ನು ಪರಿಹಾಸ್ಯ ಮಾಡಿದ ಮೇಲೆ ಕಡುಗೆಂಪು ಬಣ್ಣದ ಬಟ್ಟೆಯನ್ನು ಅವರಿಂದ ತೆಗೆದುಹಾಕಿ ಅವರ ಸ್ವಂತ ಬಟ್ಟೆಗಳನ್ನು ಅವರಿಗೆ ಉಡಿಸಿ ಶಿಲುಬೆಗೆ ಹಾಕುವುದಕ್ಕಾಗಿ ತೆಗೆದುಕೊಂಡು ಹೋದರು.</verse>
				<verse number="21">ಅಲೆಕ್ಸಾಂದ್ರ ಮತ್ತು ರೂಫ ಎಂಬುವರ ತಂದೆಯಾದ ಕುರೇನೆದ ಸೀಮೋನನು ಗ್ರಾಮದಿಂದ ಹಾದು ಹೋಗುತ್ತಿರುವಾಗ, ಸೈನಿಕರು ಯೇಸುವಿನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.</verse>
				<verse number="22">ತರುವಾಯ “ತಲೆಬುರುಡೆಯ ಸ್ಥಳ” ಎಂದು ಅರ್ಥವಿದ್ದ “ಗೊಲ್ಗೊಥಾ” ಎಂಬ ಸ್ಥಳಕ್ಕೆ ಅವರು ಯೇಸುವನ್ನು ತೆಗೆದುಕೊಂಡು ಬಂದರು.</verse>
				<verse number="23">ಆಗ ಅವರು ಯೇಸುವಿಗೆ ರಕ್ತಬೋಳ ಬೆರೆಸಿದ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟರು. ಆದರೆ ಯೇಸು ಅದನ್ನು ತೆಗೆದುಕೊಳ್ಳಲಿಲ್ಲ.</verse>
				<verse number="24">ಅವರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರ ಬಟ್ಟೆಗಳನ್ನು ಪಾಲುಮಾಡಿಕೊಂಡರು. ಯಾರಿಗೆ ಯಾವುದು ಬರುವುದೋ ಎಂದು ಚೀಟುಹಾಕಿದರು.</verse>
				<verse number="25">ಯೇಸುವನ್ನು ಶಿಲುಬೆಗೆ ಹಾಕಿದಾಗ ಮುಂಜಾನೆ ಒಂಬತ್ತು ಗಂಟೆಯಾಗಿತ್ತು.</verse>
				<verse number="26">ಯೇಸುವಿನ ಮೇಲೆ ಹೊರಿಸಿದ ದೋಷಾರೋಪಣೆ ಹೀಗೆ ಬರೆದಿತ್ತು: ಈತನು ಯೆಹೂದ್ಯರ ಅರಸನು.</verse>
				<verse number="27">ಯೇಸುವಿನೊಂದಿಗೆ ಇಬ್ಬರು ಕಳ್ಳರನ್ನು ತಂದು, ಒಬ್ಬನನ್ನು ಬಲಗಡೆಯಲ್ಲಿ ಇನ್ನೊಬ್ಬನನ್ನು ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು.</verse>
				<verse number="28">ಹೀಗೆ, “ಆತನನ್ನು ಅಪರಾಧಿಗಳೊಂದಿಗೆ ಸೇರಿಸಿದರು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು.</verse>
				<verse number="29">ಅಲ್ಲಿ ಹಾದು ಹೋಗುತ್ತಿದ್ದವರು ಯೇಸುವನ್ನು ದೂಷಿಸಿ, ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾ, “ದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಕಟ್ಟುವವನೇ,</verse>
				<verse number="30">ನಿನ್ನನ್ನು ರಕ್ಷಿಸಿಕೊಂಡು ಶಿಲುಬೆಯಿಂದ ಕೆಳಗಿಳಿದು ಬಾ,” ಎಂದು ಯೇಸುವನ್ನು ಅಪಹಾಸ್ಯ ಮಾಡಿದರು.</verse>
				<verse number="31">ಅದೇ ಪ್ರಕಾರ ಮುಖ್ಯಯಾಜಕರು ನಿಯಮ ಬೋಧಕರೂ ಯೇಸುವನ್ನು ಅಪಹಾಸ್ಯಮಾಡಿ, “ಈತನು ಇತರರನ್ನು ರಕ್ಷಿಸಿದನು, ತನ್ನನ್ನು ತಾನೇ ರಕ್ಷಿಸಿಕೊಳ್ಳಲಾರನು!</verse>
				<verse number="32">ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ನಾವು ಕಂಡು ನಂಬುತ್ತೇವೆ,” ಎಂದು ತಮ್ಮಲ್ಲಿ ಪರಸ್ಪರ ಮಾತನಾಡಿಕೊಂಡರು. ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಗಿದ್ದವರೂ ಅವರನ್ನು ನಿಂದಿಸಿದರು.</verse>
				<verse number="33">ಮಧ್ಯಾಹ್ನದಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.</verse>
				<verse number="34">ಮೂರು ಗಂಟೆಯ ಸಮಯದಲ್ಲಿ ಯೇಸು, “ಎಲೋಹಿ, ಎಲೋಹಿ, ಲಮಾ ಸಬಕ್ತಾನೀ?” ಎಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ?” ಎಂದು ಮಹಾಧ್ವನಿಯಿಂದ ಕೂಗಿದರು.</verse>
				<verse number="35">ಹತ್ತಿರ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ಇಗೋ, ಈತನು ಎಲೀಯನನ್ನು ಕರೆಯುತ್ತಿದ್ದಾನೆ,” ಎಂದರು.</verse>
				<verse number="36">ಆಗ ಒಬ್ಬನು ಓಡಿಹೋಗಿ ಹೀರುವ ವಸ್ತುವಿನಿಂದ ಹುಳಿರಸದಲ್ಲಿ ಅದ್ದಿ ಒಂದು ಕೋಲಿಗೆ ಸಿಕ್ಕಿಸಿ ಯೇಸುವಿಗೆ ಕುಡಿಯಲು ಕೊಟ್ಟು, “ಬಿಡಿರಿ, ಈತನನ್ನು ಕೆಳಗೆ ಇಳಿಸುವುದಕ್ಕೆ ಎಲೀಯನು ಬರುವನೋ ನೋಡೋಣ,” ಎಂದನು.</verse>
				<verse number="37">ಆದರೆ ಯೇಸು ಮಹಾಧ್ವನಿಯಿಂದ ಕೂಗಿ ಪ್ರಾಣಬಿಟ್ಟರು.</verse>
				<verse number="38">ಆಗ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು.</verse>
				<verse number="39">ಯೇಸು ಹೀಗೆ ಕೂಗಿ ಪ್ರಾಣಬಿಟ್ಟಿದ್ದನ್ನು ಅವರ ಎದುರಿಗೆ ನಿಂತಿದ್ದ ಶತಾಧಿಪತಿಯು ಕಂಡು, “ನಿಜವಾಗಿಯೂ ಈ ಮನುಷ್ಯನು ದೇವಪುತ್ರ,” ಎಂದನು.</verse>
				<verse number="40">ಅಲ್ಲಿ ಸ್ತ್ರೀಯರು ದೂರದಿಂದ ನೋಡುತ್ತಿದ್ದರು. ಅವರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಾಕೋಬನ ಮತ್ತು ಯೋಸೆಯ ತಾಯಿ ಮರಿಯಳು, ಸಲೋಮೆಯು ಇದ್ದರು.</verse>
				<verse number="41">ಯೇಸು ಗಲಿಲಾಯದಲ್ಲಿದ್ದಾಗ ಈ ಸ್ತ್ರೀಯರು ಅವರನ್ನು ಹಿಂಬಾಲಿಸಿ, ಉಪಚರಿಸಿದರು. ಯೇಸುವಿನೊಂದಿಗೆ ಯೆರೂಸಲೇಮಿಗೆ ಬಂದಿದ್ದ ಇನ್ನೂ ಬೇರೆ ಅನೇಕ ಸ್ತ್ರೀಯರೂ ಅಲ್ಲಿದ್ದರು.</verse>
				<verse number="42">ಸಂಜೆ ಸಮೀಪಿಸುತ್ತಿದ್ದಾಗ, ಅದು ಸಬ್ಬತ್ ದಿನದ ಸಿದ್ಧತೆಯ ಹಿಂದಿನ ದಿವಸವಾಗಿತ್ತು.</verse>
				<verse number="43">ಗೌರವವುಳ್ಳವನೂ ಆಲೋಚನಾಸಭೆಯ ಸದಸ್ಯನೂ ದೇವರ ರಾಜ್ಯಕ್ಕಾಗಿ ಕಾಯುತ್ತಿದ್ದವನೂ ಆದ ಅರಿಮಥಾಯದ ಯೋಸೇಫನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು.</verse>
				<verse number="44">ಯೇಸು ಅಷ್ಟು ಬೇಗ ಮರಣಹೊಂದಿದ್ದಾರೆಂದು ತಿಳಿದು ಪಿಲಾತನು ಆಶ್ಚರ್ಯಪಟ್ಟು ಶತಾಧಿಪತಿಯನ್ನು ತನ್ನ ಬಳಿಗೆ ಕರೆದು, “ಯೇಸು ಆಗಲೇ ಮೃತನಾದನೋ?” ಎಂದು ವಿಚಾರಿಸಿ</verse>
				<verse number="45">ತಿಳಿದುಕೊಂಡ ಮೇಲೆ ಪಾರ್ಥಿವ ಶರೀರವನ್ನು ಯೋಸೇಫನಿಗೆ ಒಪ್ಪಿಸಿದನು.</verse>
				<verse number="46">ಅವನು ಶುಭ್ರವಾದ ನಾರುಬಟ್ಟೆಯನ್ನು ಕೊಂಡುಕೊಂಡು ಬಂದು ಯೇಸುವನ್ನು ಶಿಲುಬೆಯಿಂದ ಇಳಿಸಿ ಆ ನಾರುಬಟ್ಟೆಯಲ್ಲಿ ಅದನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಯೇಸುವಿನ ಸಮಾಧಿಯ ದ್ವಾರಕ್ಕೆ ಒಂದು ಬಂಡೆಯನ್ನು ಉರುಳಿಸಿದನು.</verse>
				<verse number="47">ಮಗ್ದಲದ ಮರಿಯಳು ಮತ್ತು ಯೋಸೆಯ ತಾಯಿಯಾದ ಮರಿಯಳು ಯೇಸುವನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.</verse>
			</chapter>
			<chapter number="16">
				<verse number="1">ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಸಲೋಮೆಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡುಕೊಂಡು ಬಂದರು.</verse>
				<verse number="2">ವಾರದ ಮೊದಲನೆಯ ದಿನ ಮುಂಜಾನೆ ಸೂರ್ಯೋದಯವಾಗಲು ಅವರು ಸಮಾಧಿಯ ಬಳಿಗೆ ಬರುವಾಗ,</verse>
				<verse number="3">“ಸಮಾಧಿಯ ದ್ವಾರದಿಂದ ಆ ಬಂಡೆಯನ್ನು ನಮಗೋಸ್ಕರ ಉರುಳಿಸುವವರು ಯಾರು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.</verse>
				<verse number="4">ಏಕೆಂದರೆ ಆ ಬಂಡೆ ಬಹಳ ದೊಡ್ಡದಾಗಿತ್ತು. ಆದರೆ ಅವರು ಮತ್ತೆ ಕಂಡಾಗ ಆ ಬಂಡೆ ಉರುಳಿಸಲಾಗಿತ್ತು.</verse>
				<verse number="5">ಅವರು ಸಮಾಧಿಯೊಳಕ್ಕೆ ಪ್ರವೇಶಿಸಿದಾಗ, ಬಿಳಿ ಉಡುಪನ್ನು ತೊಟ್ಟುಕೊಂಡಿದ್ದ ಒಬ್ಬ ಯುವಕನು ಬಲಗಡೆಯಲ್ಲಿ ಕುಳಿತಿರುವುದನ್ನು ಕಂಡು ಭಯಭ್ರಾಂತರಾದರು.</verse>
				<verse number="6">ಅವನು ಅವರಿಗೆ, “ಭಯಪಡಬೇಡಿರಿ, ಶಿಲುಬೆಗೆ ಹಾಕಲಾದ ನಜರೇತಿನ ಯೇಸುವನ್ನು ಹುಡುಕುತ್ತಿದ್ದೀರೊ? ಅವರು ಜೀವಿತರಾಗಿ ಎದ್ದಿದ್ದಾರೆ! ಇಲ್ಲಿ ಇಲ್ಲ; ಅವರನ್ನು ಇಟ್ಟಿದ್ದ ಸ್ಥಳವನ್ನು ನೋಡಿರಿ.</verse>
				<verse number="7">ಆದರೆ ನೀವು ಹೊರಟುಹೋಗಿ ಯೇಸು ನಿಮಗೆ ಹೇಳಿದಂತೆ, ‘ನಿಮಗಿಂತ ಮುಂಚಿತವಾಗಿ ಗಲಿಲಾಯಕ್ಕೆ ಹೋಗುತ್ತಾರೆ, ಅಲ್ಲಿ ನೀವು ಯೇಸುವನ್ನು ಕಾಣುವಿರಿ’ ಎಂದು ಅವರ ಶಿಷ್ಯರಿಗೆ ಮತ್ತು ಪೇತ್ರನಿಗೆ ಹೇಳಿರಿ,” ಎಂದನು.</verse>
				<verse number="8">ಅವರು ವಿಸ್ಮಯಗೊಂಡು ಭಯದಿಂದ ನಡುಗುತ್ತಾ ಸಮಾಧಿಯ ಬಳಿಯಿಂದ ಓಡಿಹೋದರು. ಅವರು ಹೆದರಿದ್ದರಿಂದ ಯಾರಿಗೂ ಏನೂ ಹೇಳಲಿಲ್ಲ.</verse>
				<verse number="9">ವಾರದ ಮೊದಲನೆಯ ದಿನದ ಬೆಳಿಗ್ಗೆ ಯೇಸು ಎದ್ದ ಮೇಲೆ ತಾವು ಏಳು ದೆವ್ವಗಳನ್ನು ಬಿಡಿಸಿದ್ದ ಮಗ್ದಲದ ಮರಿಯಳಿಗೆ ಅವರು ಮೊದಲು ಕಾಣಿಸಿಕೊಂಡರು.</verse>
				<verse number="10">ಯೇಸುವಿನ ಸಂಗಡ ಇದ್ದವರು ಶೋಕಿಸಿ ಅಳುತ್ತಿರುವಾಗ ಆಕೆಯು ಹೋಗಿ ಅವರಿಗೆ ಯೇಸುವಿನ ಬಗ್ಗೆ ಹೇಳಿದಳು.</verse>
				<verse number="11">ಆದರೆ ಯೇಸು ಜೀವಂತರಾಗಿದ್ದಾರೆ ಮತ್ತು ಆಕೆಗೆ ಕಾಣಿಸಿಕೊಂಡಿದ್ದಾರೆ ಎಂಬ ವಾರ್ತೆಯನ್ನು ಕೇಳಿದಾಗ, ಶಿಷ್ಯರು ನಂಬಲಿಲ್ಲ.</verse>
				<verse number="12">ಇದಾದ ಮೇಲೆ ಅವರಲ್ಲಿ ಇಬ್ಬರು ಒಂದು ಗ್ರಾಮಕ್ಕೆ ನಡೆದು ಹೋಗುತ್ತಿದ್ದಾಗ ಯೇಸು ಅವರಿಗೆ ಬೇರೊಂದು ರೀತಿಯಲ್ಲಿ ಕಾಣಿಸಿಕೊಂಡರು.</verse>
				<verse number="13">ಅವರು ಹೋಗಿ ಉಳಿದ ಶಿಷ್ಯರಿಗೆ ತಿಳಿಸಿದರು. ಆದರೆ ಇವರನ್ನೂ ಅವರು ನಂಬಲಿಲ್ಲ.</verse>
				<verse number="14">ತರುವಾಯ ಊಟಕ್ಕೆ ಕುಳಿತಿದ್ದ ಹನ್ನೊಂದು ಮಂದಿಗೆ ಯೇಸು ಕಾಣಿಸಿಕೊಂಡರು. ತಾವು ಜೀವಿತರಾಗಿ ಎದ್ದು ಬಂದ ಮೇಲೆ ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅಪನಂಬಿಕೆಯನ್ನೂ ಹೃದಯದ ಕಾಠಿಣ್ಯವನ್ನೂ ಯೇಸು ಗದರಿಸಿದರು.</verse>
				<verse number="15">ಯೇಸು ಅವರಿಗೆ, “ನೀವು ಜಗತ್ತಿನ ಎಲ್ಲಾ ಕಡೆಗಳಿಗೆ ಹೋಗಿ ಸರ್ವಸೃಷ್ಟಿಗೂ ಸುವಾರ್ತೆಯನ್ನು ಸಾರಿರಿ.</verse>
				<verse number="16">ನಂಬಿ ದೀಕ್ಷಾಸ್ನಾನ ಮಾಡಿಸಿಕೊಳ್ಳುವವನು ರಕ್ಷಣೆಹೊಂದುವನು. ಆದರೆ ನಂಬದೆ ಹೋಗುವವನು ದಂಡನೆಗೆ ಗುರಿಯಾಗುವನು.</verse>
				<verse number="17">ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವುವು: ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವರು, ಅವರು ಹೊಸ ಭಾಷೆಗಳಲ್ಲಿ ಮಾತನಾಡುವರು.</verse>
				<verse number="18">ಅವರು ಸರ್ಪಗಳನ್ನು ಎತ್ತುವರು ಮತ್ತು ಮಾರಣಾಂತಿಕವಾದ ಯಾವುದನ್ನಾದರೂ ಕುಡಿದರೆ ಅದು ಅವರಿಗೆ ಯಾವ ಕೇಡನ್ನೂ ಮಾಡುವುದಿಲ್ಲ. ಅವರು ರೋಗಿಗಳ ಮೇಲೆ ಕೈಗಳನ್ನಿಟ್ಟಾಗ ರೋಗಿಗಳು ಸ್ವಸ್ಥರಾಗುವರು,” ಎಂದು ಹೇಳಿದರು.</verse>
				<verse number="19">ಕರ್ತ ಯೇಸು ಅವರೊಂದಿಗೆ ಮಾತನಾಡಿದ ನಂತರ, ಅವರು ಪರಲೋಕಕ್ಕೆ ಏರಿ ದೇವರ ಬಲಪಾರ್ಶ್ವದಲ್ಲಿ ಕುಳಿತುಕೊಂಡರು.</verse>
				<verse number="20">ಶಿಷ್ಯರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು. ಕರ್ತನು ಅವರ ಜೊತೆಯಲ್ಲಿ ಕೆಲಸ ಮಾಡುತ್ತಾ, ಸೂಚಕಕಾರ್ಯಗಳಿಂದ ತಮ್ಮ ವಾಕ್ಯವನ್ನು ಸ್ಥಿರಪಡಿಸುತ್ತಾ ಇದ್ದರು.</verse>
			</chapter>
		</book>
		<book number="42">
			<chapter number="1">
				<verse number="1">ಸನ್ಮಾನ್ಯ ಥೆಯೊಫಿಲರೇ, ನಮ್ಮ ಮಧ್ಯದಲ್ಲಿ ನಡೆದಿರುವ ಘಟನೆಗಳ ವರದಿಯನ್ನು ಬರೆದಿಡಲು ಅನೇಕರು ಪ್ರಯತ್ನಿಸಿದ್ದಾರೆ.</verse>
				<verse number="2">ಮೊದಲಿನಿಂದ ಕಣ್ಣಾರೆ ಕಂಡವರೂ ದೇವರ ವಾಕ್ಯದ ಸೇವಕರೂ ನಮಗೆ ಕೊಟ್ಟಿರುವ ರೀತಿಯಲ್ಲಿಯೇ ಬರೆದಿದ್ದಾರೆ.</verse>
				<verse number="3">ಆದ್ದರಿಂದ ನಾನು ಸಹ ಮೊದಲಿನಿಂದ ಎಲ್ಲವನ್ನೂ ಸೂಕ್ಷ್ಮವಾಗಿ ಪರಿಶೋಧಿಸಿ, ಅವುಗಳನ್ನು ಕ್ರಮವಾಗಿ ನಿಮಗೆ ಬರೆಯುವುದು ಒಳ್ಳೆಯದೆಂದು ನನಗೆ ತೋಚಿತು.</verse>
				<verse number="4">ಹೀಗೆ ನಿಮಗೆ ಬೋಧಿಸಿರುವ ವಿಷಯಗಳು ಖಚಿತವೆಂದು ನಿಮಗೆ ತಿಳಿದುಬರುವುದು.</verse>
				<verse number="5">ಯೂದಾಯದ ಅರಸನಾಗಿದ್ದ ಹೆರೋದನ ದಿನಗಳಲ್ಲಿ, ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಇವನ ಹೆಂಡತಿಯ ಹೆಸರು ಎಲಿಸಬೇತ್. ಇವಳು ಆರೋನನ ವಂಶದವಳು.</verse>
				<verse number="6">ಇವರಿಬ್ಬರೂ ಕರ್ತದೇವರ ಎಲ್ಲಾ ಆಜ್ಞೆಗಳನ್ನೂ ತೀರ್ಪುಗಳನ್ನೂ ತಪ್ಪಿಲ್ಲದೆ ಕೈಕೊಂಡು, ದೇವರ ಮುಂದೆ ನೀತಿವಂತರಾಗಿದ್ದರು.</verse>
				<verse number="7">ಆದರೆ ಎಲಿಸಬೇತಳು ಬಂಜೆಯಾದುದರಿಂದ ಅವರಿಗೆ ಮಕ್ಕಳಿರಲಿಲ್ಲ, ಇದಲ್ಲದೆ ಅವರಿಬ್ಬರೂ ಬಹಳ ವಯಸ್ಸಾದವರಾಗಿದ್ದರು.</verse>
				<verse number="8">ಹೀಗಿರಲಾಗಿ ಜಕರೀಯನು ತನ್ನ ವರ್ಗದ ಸರದಿಯ ಪ್ರಕಾರ ದೇವರ ಮುಂದೆ ಯಾಜಕ ಸೇವೆಯನ್ನು ಮಾಡುತ್ತಿದ್ದಾಗ,</verse>
				<verse number="9">ಯಾಜಕೋದ್ಯೋಗದ ಪದ್ಧತಿಯಂತೆ, ಅವನು ಕರ್ತದೇವರ ಆಲಯವನ್ನು ಪ್ರವೇಶಿಸಿ ಧೂಪವನ್ನು ಅರ್ಪಿಸುವದಕ್ಕೆ ಚೀಟು ಹಾಕಿದಾಗ, ಅದು ಅವನ ಪಾಲಿಗೆ ಬಿದ್ದಿತು.</verse>
				<verse number="10">ಧೂಪಾರ್ಪಣೆಯ ಸಮಯದಲ್ಲಿ ಸೇರಿದ ಜನರೆಲ್ಲರೂ ಹೊರಗೆ ಪ್ರಾರ್ಥಿಸುತ್ತಿದ್ದರು.</verse>
				<verse number="11">ಆಗ ಧೂಪವೇದಿಯ ಬಲಗಡೆಯಲ್ಲಿ ನಿಂತುಕೊಂಡಿದ್ದ, ಕರ್ತದೇವರ ದೂತನು ಅವನಿಗೆ ಕಾಣಿಸಿಕೊಂಡನು.</verse>
				<verse number="12">ಜಕರೀಯನು ದೂತನನ್ನು ಕಂಡು, ಚಕಿತಗೊಂಡು ಭಯಭ್ರಾಂತನಾದನು.</verse>
				<verse number="13">ಆದರೆ ದೂತನು ಅವನಿಗೆ, “ಜಕರೀಯನೇ; ಭಯಪಡಬೇಡ, ದೇವರು ನಿನ್ನ ವಿಜ್ಞಾಪನೆಯನ್ನು ಕೇಳಿದ್ದಾರೆ. ನಿನ್ನ ಹೆಂಡತಿ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು, ನೀನು ಅವನಿಗೆ, ‘ಯೋಹಾನ’ ಎಂದು ಹೆಸರನ್ನಿಡಬೇಕು.</verse>
				<verse number="14">ಅನೇಕರು ಅವನ ಜನನಕ್ಕೆ ಸಂತೋಷಪಡುವರು, ನಿನಗೆ ಆನಂದವೂ ಉಲ್ಲಾಸವೂ ಆಗುವುದು,</verse>
				<verse number="15">ಅವನು ಕರ್ತದೇವರ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಕುಡಿಯುವುದಿಲ್ಲ, ಅವನು ತಾಯಿಯ ಗರ್ಭದಿಂದಲೇ ಪವಿತ್ರಾತ್ಮ ಭರಿತನಾಗಿರುವನು.</verse>
				<verse number="16">ಅವನು ಇಸ್ರಾಯೇಲರಲ್ಲಿ ಅನೇಕರನ್ನು ಅವರ ಕರ್ತದೇವರ ಕಡೆಗೆ ತಿರುಗಿಸುವನು.</verse>
				<verse number="17">ಅವನು ತಂದೆಯರ ಹೃದಯಗಳನ್ನು ಮಕ್ಕಳ ಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ, ಕರ್ತ ದೇವರಿಗೋಸ್ಕರ ಜನರನ್ನು ಸಿದ್ಧಮಾಡುವುದಕ್ಕೆ ಎಲೀಯನ ಆತ್ಮದಿಂದಲೂ ಶಕ್ತಿಯಿಂದಲೂ ಕರ್ತದೇವರ ಮುಂದೆ ಹೋಗುವನು,” ಎಂದು ಹೇಳಿದನು.</verse>
				<verse number="18">ಜಕರೀಯನು ಆ ದೇವದೂತನಿಗೆ, “ಇದನ್ನು ನಾನು ಯಾವುದರಿಂದ ತಿಳಿದುಕೊಳ್ಳಲಿ? ನಾನು ಮುದುಕನು; ನನ್ನ ಹೆಂಡತಿಯೂ ಪ್ರಾಯ ಮೀರಿದವಳು,” ಎಂದನು.</verse>
				<verse number="19">ಅದಕ್ಕೆ ಆ ದೂತನು ಉತ್ತರವಾಗಿ, “ನಾನು ದೇವರ ಸನ್ನಿಧಿಯಲ್ಲಿ ನಿಲ್ಲುವ ಗಬ್ರಿಯೇಲನು. ನಿನ್ನ ಸಂಗಡ ಮಾತನಾಡುವುದಕ್ಕೂ ಈ ಸಂತೋಷದ ವರ್ತಮಾನವನ್ನು ನಿನಗೆ ತಿಳಿಸುವುದಕ್ಕೂ ದೇವರು ನನ್ನನ್ನು ಕಳುಹಿಸಿದ್ದಾರೆ.</verse>
				<verse number="20">ಸಕಾಲದಲ್ಲಿ ನೆರವೇರುವ ನನ್ನ ಮಾತುಗಳನ್ನು ನೀನು ನಂಬದೆ ಹೋದಕಾರಣ, ಈ ಸಂಗತಿಗಳು ಈಡೇರುವ ದಿನದವರೆಗೆ ನೀನು ಮಾತನಾಡಲಾರದೆ ಮೂಕನಾಗಿರುವಿ,” ಎಂದನು.</verse>
				<verse number="21">ಆಗ, ಜಕರೀಯನಿಗಾಗಿ ಕಾದುಕೊಂಡಿದ್ದ ಜನರು ಅವನು ದೇವಾಲಯದೊಳಗೆ ತಡಮಾಡಿದ್ದಕ್ಕೆ ಆಶ್ಚರ್ಯಪಟ್ಟರು.</verse>
				<verse number="22">ಜಕರೀಯನು ಹೊರಗೆ ಬಂದಾಗ, ಅವರೊಂದಿಗೆ ಏನೂ ಮಾತನಾಡಲಾಗಲಿಲ್ಲ. ಅವನು ಅವರಿಗೆ ಸನ್ನೆಮಾಡುತ್ತಾ ಮೂಕನಾಗಿಯೇ ಇದ್ದುದರಿಂದ, ಅವರು ದೇವಾಲಯದಲ್ಲಿ ಅವನಿಗೆ ಏನೋ ದರ್ಶನವಾಗಿರಬೇಕೆಂದು ಗ್ರಹಿಸಿದರು.</verse>
				<verse number="23">ತನ್ನ ಸೇವೆಯ ದಿನಗಳು ಮುಗಿದ ನಂತರ, ಜಕರೀಯನು ತನ್ನ ಮನೆಗೆ ಹೊರಟುಹೋದನು.</verse>
				<verse number="24">ಕೆಲವು ದಿನಗಳಾದ ಮೇಲೆ, ಅವನ ಹೆಂಡತಿ ಎಲಿಸಬೇತಳು ಗರ್ಭಿಣಿಯಾಗಿ, ಐದು ತಿಂಗಳು ಮನೆಯಲ್ಲಿ ಮರೆಯಾಗಿದ್ದಳು.</verse>
				<verse number="25">ಅವಳು, “ಜನರಲ್ಲಿ ನನಗಿದ್ದ ಅವಮಾನವನ್ನು ತೆಗೆದುಹಾಕುವುದಕ್ಕಾಗಿ ಕರ್ತದೇವರು ನನ್ನ ಮೇಲೆ ದಯೆತೋರಿಸಿ ಈ ದಿನಗಳಲ್ಲಿ ನನಗೆ ಹೀಗೆ ಮಾಡಿದ್ದಾರೆ,” ಎಂದು ಹೇಳಿದಳು.</verse>
				<verse number="26">ಎಲಿಸಬೇತಳು ಗರ್ಭಿಣಿಯಾದ ಆರನೆಯ ತಿಂಗಳಲ್ಲಿ, ಗಲಿಲಾಯ ಪ್ರಾಂತದ ನಜರೇತೆಂಬ ಊರಿಗೆ, ದೇವರು ಗಬ್ರಿಯೇಲನೆಂಬ ದೇವದೂತನನ್ನು,</verse>
				<verse number="27">ದಾವೀದನ ವಂಶದ ಯೋಸೇಫನಿಗೆ, ನಿಶ್ಚಯವಾಗಿದ್ದ ಮರಿಯಳೆಂಬ ಒಬ್ಬ ಕನ್ನಿಕೆಯ ಬಳಿಗೆ ಕಳುಹಿಸಿದರು.</verse>
				<verse number="28">ಆ ದೇವದೂತನು ಆಕೆಗೆ, “ಅತ್ಯಂತ ದಯೆ ಹೊಂದಿದವಳೇ! ನಿನಗೆ ಶುಭವಾಗಲಿ, ಪ್ರಭುವು ನಿನ್ನೊಂದಿಗಿದ್ದಾರೆ,” ಎಂದು ಹೇಳಿದನು.</verse>
				<verse number="29">ಮರಿಯಳು ದೇವದೂತನ ಮಾತಿಗೆ ಬಹಳವಾಗಿ ಕಳವಳಗೊಂಡು, “ಇದು ಎಂಥಾ ಶುಭಾಶಯ?” ಎಂದು ತನ್ನ ಮನದಲ್ಲಿ ಯೋಚಿಸತೊಡಗಿದಳು.</verse>
				<verse number="30">ಆ ದೇವದೂತನು ಆಕೆಗೆ, “ಮರಿಯಳೇ, ಹೆದರಬೇಡ. ನೀನು ದೇವರ ದಯೆಯನ್ನು ಹೊಂದಿರುವಿ.</verse>
				<verse number="31">ಇಗೋ, ನೀನು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವೆ, ಅವರಿಗೆ ‘ಯೇಸು’ ಎಂದು ಹೆಸರಿಡಬೇಕು.</verse>
				<verse number="32">ಅವರು ದೊಡ್ಡವರಾಗಿ ಮಹೋನ್ನತರ ಪುತ್ರ ಎಂದು ಎನಿಸಿಕೊಳ್ಳುವರು. ಕರ್ತದೇವರು ಅವರ ತಂದೆ ದಾವೀದನ ಸಿಂಹಾಸನವನ್ನು ಅವರಿಗೆ ಕೊಡುವರು.</verse>
				<verse number="33">ಅವರು ಯಾಕೋಬನ ವಂಶವನ್ನು ಸದಾಕಾಲ ಆಳುವರು; ಅವರ ರಾಜ್ಯಕ್ಕೆ ಅಂತ್ಯವೇ ಇರುವುದಿಲ್ಲ,” ಎಂದು ಹೇಳಿದನು.</verse>
				<verse number="34">ಮರಿಯಳು ಆ ದೇವದೂತನಿಗೆ, “ಇದು ಹೇಗಾಗುವುದು, ನಾನು ಕನ್ಯೆ?” ಎಂದಳು.</verse>
				<verse number="35">ಆ ದೇವದೂತನು ಉತ್ತರವಾಗಿ ಮರಿಯಳಿಗೆ, “ಪವಿತ್ರಾತ್ಮ ನಿನ್ನ ಮೇಲೆ ಬರಲು, ಮಹೋನ್ನತ ದೇವರ ಶಕ್ತಿಯು ನಿನ್ನನ್ನು ಆವರಿಸುವುದು. ಆದ್ದರಿಂದ ನಿನ್ನಿಂದ ಹುಟ್ಟುವ ಆ ಪವಿತ್ರ ಶಿಶುವು ದೇವರ ಪುತ್ರ ಎನಿಸಿಕೊಳ್ಳುವುದು.</verse>
				<verse number="36">ನಿನ್ನ ಬಂಧು ಎಲಿಸಬೇತಳು ಸಹ ತನ್ನ ಮುಪ್ಪಿನ ಪ್ರಾಯದಲ್ಲಿ ಒಬ್ಬ ಮಗನನ್ನು ಹೆರಲಿದ್ದಾಳೆ. ಬಂಜೆಯಾಗಿದ್ದ ಆಕೆಗೆ ಇದು ಆರನೆಯ ತಿಂಗಳು.</verse>
				<verse number="37">ದೇವರಿಂದ ಬರುವ ಯಾವ ತಕ್ಕ ಮಾತು ಎಂದಿಗೂ ಅಸಾಧ್ಯವಾಗಿರುವುದಿಲ್ಲ,” ಎಂದು ಹೇಳಿದನು.</verse>
				<verse number="38">ಮರಿಯಳು, “ಇಗೋ ನಾನು ಕರ್ತದೇವರ ದಾಸಿ, ನಿನ್ನ ತಕ್ಕ ಮಾತಿನಂತೆ ನನಗಾಗಲಿ,” ಎಂದಳು. ಆಗ ದೇವದೂತನು ಆಕೆಯ ಬಳಿಯಿಂದ ಹೊರಟುಹೋದನು.</verse>
				<verse number="39">ಆ ಕಾಲದಲ್ಲಿ ಮರಿಯಳು ಬೆಟ್ಟದ ಸೀಮೆಯ ಯೆಹೂದದಲ್ಲಿರುವ ಒಂದು ಊರಿಗೆ ಅವಸರವಾಗಿ ಹೊರಡಲು ಸಿದ್ಧಳಾದಳು.</verse>
				<verse number="40">ಅಲ್ಲಿ ಜಕರೀಯನ ಮನೆಯನ್ನು ಪ್ರವೇಶಿಸಿ, ಎಲಿಸಬೇತಳನ್ನು ವಂದಿಸಿದಳು.</verse>
				<verse number="41">ಮರಿಯಳ ವಂದನೆಯನ್ನು ಕೇಳಿದಾಗ, ಎಲಿಸಬೇತಳ ಗರ್ಭದಲ್ಲಿದ್ದ ಕೂಸು ನಲಿದಾಡಿತು ಮತ್ತು ಎಲಿಸಬೇತಳು ಪವಿತ್ರಾತ್ಮ ಭರಿತಳಾಗಿ</verse>
				<verse number="42">ಮಹಾಧ್ವನಿಯಿಂದ: “ಸ್ತ್ರೀಯರಲ್ಲಿ ನೀನು ಧನ್ಯಳೇ, ನಿನ್ನಲ್ಲಿ ಹುಟ್ಟುವ ಶಿಶುವೂ ಆಶೀರ್ವಾದ ಹೊಂದಿದ್ದು!</verse>
				<verse number="43">ನನ್ನ ಕರ್ತದೇವರ ತಾಯಿಯು, ನನ್ನ ಬಳಿಗೆ ಬರುವಷ್ಟು ನಾನು ದಯೆ ಹೊಂದಿದ್ದು ಏಕೆ?</verse>
				<verse number="44">ಇಗೋ, ನಿನ್ನ ವಂದನೆಯ ಧ್ವನಿಯು ನನ್ನ ಕಿವಿಗಳಲ್ಲಿ ಬಿದ್ದ ಕೂಡಲೇ, ಶಿಶುವು ನನ್ನ ಗರ್ಭದಲ್ಲಿ ಉಲ್ಲಾಸದಿಂದ ನಲಿದಾಡಿತು.</verse>
				<verse number="45">ಕರ್ತದೇವರು ತಮಗೆ ಹೇಳಿದವುಗಳು ನೆರವೇರುವುವು ಎಂದು ನಂಬಿದವಳು ಧನ್ಯಳು,” ಎಂದು ಹೇಳಿದಳು.</verse>
				<verse number="46">ಆಗ ಮರಿಯಳು ಹೀಗೆ ಹೇಳಿದ್ದು: “ನನ್ನ ಪ್ರಾಣವು ಕರ್ತದೇವರನ್ನು ಸ್ತುತಿಸುತ್ತದೆ,</verse>
				<verse number="47">ನನ್ನ ಆತ್ಮವು ನನ್ನ ರಕ್ಷಕ ದೇವರಲ್ಲಿ ಉಲ್ಲಾಸಗೊಂಡಿದೆ.</verse>
				<verse number="48">ದೇವರು ತಮ್ಮ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾರೆ. ಇಂದಿನಿಂದ ತಲತಲಾಂತರದವರೆಲ್ಲರೂ ನನ್ನನ್ನು ಧನ್ಯಳೆಂದು ಕರೆಯುವರು,</verse>
				<verse number="49">ಪರಾಕ್ರಮಿಯಾದ ದೇವರು ನನಗೆ ಮಹಾಕಾರ್ಯಗಳನ್ನು ಮಾಡಿದ್ದಾರೆ, ಅವರ ಹೆಸರು ಪವಿತ್ರವಾದದ್ದು.</verse>
				<verse number="50">ದೇವರಲ್ಲಿ ಭಯಭಕ್ತಿಯುಳ್ಳವರ ಮೇಲೆ, ಅವರ ಕರುಣೆಯು ತಲತಲಾಂತರಗಳಿಗೂ ಇರುವುದು.</verse>
				<verse number="51">ದೇವರು ತಮ್ಮ ಭುಜಪರಾಕ್ರಮವನ್ನು ಮಾಡಿ; ಹೃದಯದ ಯೋಚನೆಯಲ್ಲಿ ಗರ್ವಿಷ್ಠರಾದವರನ್ನು ಚದರಿಸಿಬಿಟ್ಟಿದ್ದಾರೆ.</verse>
				<verse number="52">ಅಧಿಪತಿಗಳನ್ನು ಅವರ ಸಿಂಹಾಸನಗಳಿಂದ ಕೆಳಗೆ ದಬ್ಬಿ, ದೀನರನ್ನು ಮೇಲಕ್ಕೆ ಎತ್ತಿದ್ದಾರೆ.</verse>
				<verse number="53">ಹಸಿದವರನ್ನು ಒಳ್ಳೆಯವುಗಳಿಂದ ತುಂಬಿಸಿ, ಐಶ್ವರ್ಯವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾರೆ.</verse>
				<verse number="54">ನಮ್ಮ ಪಿತೃಗಳಾದ ಅಬ್ರಹಾಮನಿಗೂ ಅವನ ಸಂತತಿಗೂ ತಾವು ವಾಗ್ದಾನಮಾಡಿದ ತಮ್ಮ ನಿತ್ಯ ಕರುಣೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಸೇವಕನಾದ ಇಸ್ರಾಯೇಲನಿಗೆ, ದೇವರು ಸಹಾಯ ಮಾಡಿದ್ದಾರೆ.”</verse>
				<verse number="55"></verse>
				<verse number="56">ಮರಿಯಳು ಸುಮಾರು ಮೂರು ತಿಂಗಳು ಎಲಿಸಬೇತಳ ಜೊತೆಯಲ್ಲಿದ್ದು, ಅನಂತರ ತನ್ನ ಮನೆಗೆ ಹಿಂತಿರುಗಿ ಹೋದಳು.</verse>
				<verse number="57">ಎಲಿಸಬೇತಳಿಗೆ ಹೆರಿಗೆಯ ಕಾಲ ಬಂದಾಗ, ಆಕೆಯು ಒಬ್ಬ ಮಗನನ್ನು ಹೆತ್ತಳು.</verse>
				<verse number="58">ಕರ್ತದೇವರು ತಮ್ಮ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಯವರೂ ಬಂಧುಗಳೂ ಕೇಳಿ, ಆಕೆಯ ಕೂಡ ಸಂತೋಷಪಟ್ಟರು.</verse>
				<verse number="59">ಅವರು ಎಂಟನೆಯ ದಿನ ಆ ಮಗುವಿಗೆ ಸುನ್ನತಿ ಮಾಡಿಸುವುದಕ್ಕಾಗಿ ಬಂದು, ಅವನ ತಂದೆಯ ಹೆಸರಿನಂತೆ ಮಗನನ್ನು ಜಕರೀಯನೆಂದು ನಾಮಕರಣ ಮಾಡಲಿದ್ದರು.</verse>
				<verse number="60">ಆದರೆ ಅದಕ್ಕೆ ಶಿಶುವಿನ ತಾಯಿಯು ಉತ್ತರವಾಗಿ, “ಹಾಗಲ್ಲ! ಅವನಿಗೆ ‘ಯೋಹಾನ’ ಎಂದು ಹೆಸರಿಡಬೇಕು,” ಎಂದಳು.</verse>
				<verse number="61">ಬಂದಿದ್ದವರು ಆಕೆಗೆ, “ನಿನ್ನ ಬಂಧುಬಳಗದವರಲ್ಲಿ ಆ ಹೆಸರಿನವರು ಒಬ್ಬರೂ ಇಲ್ಲವಲ್ಲಾ,” ಎಂದರು.</verse>
				<verse number="62">ಶಿಶುವನ್ನು ಯಾವ ಹೆಸರಿನಿಂದ ಕರೆಯಬೇಕೆಂದು, ಅವನ ತಂದೆಗೆ ಅವರು ಸನ್ನೆಮಾಡಿದರು.</verse>
				<verse number="63">ಆಗ ಜಕರೀಯನು ಒಂದು ಬರೆಯುವ ಹಲಗೆಯನ್ನು ಕೇಳಿ, “ಶಿಶುವಿನ ಹೆಸರು ಯೋಹಾನ,” ಎಂದು ಬರೆದನು. ಆಗ ಅವರೆಲ್ಲರೂ ಆಶ್ಚರ್ಯಪಟ್ಟರು.</verse>
				<verse number="64">ಕೂಡಲೇ ಜಕರೀಯನಿಗೆ ಮಾತು ಬಂತು, ಅವನ ನಾಲಿಗೆಯು ಸಡಿಲವಾಯಿತು, ಅವನು ಮಾತನಾಡಿ, ದೇವರನ್ನು ಕೊಂಡಾಡಿದನು.</verse>
				<verse number="65">ಈ ಘಟನೆಯಿಂದ ಸುತ್ತಲೂ ವಾಸಮಾಡುತ್ತಿದ್ದವರೆಲ್ಲರಿಗೆ ಭಯವುಂಟಾಯಿತು, ಯೂದಾಯದ ಬೆಟ್ಟದ ಪ್ರಾಂತದಲ್ಲೆಲ್ಲಾ ಈ ಸಂಗತಿಗಳನ್ನು ಮಾತನಾಡಿಕೊಳ್ಳುತ್ತಿದ್ದರು.</verse>
				<verse number="66">ಕೇಳಿದವರೆಲ್ಲರೂ ವಿಸ್ಮಯಗೊಂಡು, “ಈ ಮಗುವು ಎಂಥವನಾಗುವನೋ?” ಎಂದು ತಮ್ಮ ಮನಸ್ಸಿನಲ್ಲಿ ಪ್ರಶ್ನಿಸಿಕೊಂಡರು. ಕರ್ತದೇವರ ಹಸ್ತವು ಈ ಮಗುವಿನ ಮೇಲೆ ಇತ್ತು.</verse>
				<verse number="67">ಆಗ ಮಗುವಿನ ತಂದೆ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು:</verse>
				<verse number="68">“ಇಸ್ರಾಯೇಲಿನ ಕರ್ತದೇವರಿಗೆ ಸ್ತೋತ್ರವಾಗಲಿ, ದೇವರು ತಮ್ಮ ಜನರನ್ನು ಸಂಧಿಸಿ ಅವರನ್ನು ವಿಮೋಚಿಸಿದ್ದಾರೆ.</verse>
				<verse number="69">ಪುರಾತನದಿಂದ ಅವರು ತಮ್ಮ ಪವಿತ್ರ ಪ್ರವಾದಿಗಳ ಬಾಯಿಂದ ಮಾತನಾಡಿದ ಪ್ರಕಾರ, ದೇವರು ತಮ್ಮ ಸೇವಕ ದಾವೀದನ ಮನೆತನದಿಂದ, ನಮಗಾಗಿ ಬಲವಾದ ರಕ್ಷಣೆಯ ಕರ್ತದೇವರನ್ನು ಎಬ್ಬಿಸಿದ್ದಾರೆ.</verse>
				<verse number="70">ಇದನ್ನು, ನಾವು ನಮ್ಮ ಶತ್ರುಗಳಿಂದಲೂ ನಮ್ಮನ್ನು ದ್ವೇಷಮಾಡುವವರ ಕೈಯಿಂದಲೂ ರಕ್ಷಣೆ ಹೊಂದುವಂತೆಯೂ</verse>
				<verse number="71">ನಮ್ಮ ಪಿತೃಗಳಿಗೆ ಕರುಣೆ ತೋರಿಸುವಂತೆಯೂ ನಮ್ಮ ಪಿತೃವಾದ ಅಬ್ರಹಾಮನಿಗೆ ಆಣೆಯಿಟ್ಟು ಪ್ರಮಾಣ ಮಾಡಿದಂತೆಯೂ ತಮ್ಮ ಪವಿತ್ರ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡವನಾಗಿಯೂ</verse>
				<verse number="72">ನಾವು ನಮ್ಮ ಶತ್ರುಗಳ ಕೈಯಿಂದ ಬಿಡುಗಡೆಹೊಂದಿ ನಿರ್ಭಯವುಳ್ಳವರಾಗಿಯೂ</verse>
				<verse number="73">ನಮ್ಮ ಜೀವಮಾನದ ಎಲ್ಲಾ ದಿನಗಳಲ್ಲಿ ದೇವರ ಮುಂದೆ ಪವಿತ್ರತೆಯಿಂದಲೂ ನೀತಿಯಿಂದಲೂ ಅವರನ್ನೇ ಸೇವಿಸುವವರಾಗುವಂತೆಯೂ ಈ ಪ್ರಕಾರ ಮಾಡಿದ್ದಾರೆ.</verse>
				<verse number="74">“ನನ್ನ ಮಗುವೇ, ನೀನಾದರೋ ಮಹೋನ್ನತರ ಪ್ರವಾದಿ ಎಂದು ಎನಿಸಿಕೊಳ್ಳುವೆ. ಯಾಕೆಂದರೆ, ನೀನು ಕರ್ತದೇವರ ಮಾರ್ಗಗಳನ್ನು ಸಿದ್ಧಮಾಡುವುದಕ್ಕೆ, ಅವರ ಮುಂದೆ ಹೋಗುವೆ.</verse>
				<verse number="75">ನೀನು ಜನರ ಪಾಪಕ್ಷಮಾಪಣೆಯ ಮೂಲಕ ರಕ್ಷಣೆ ಹೊಂದುವ ತಿಳುವಳಿಕೆಯನ್ನು ಕೊಡುವೆ,</verse>
				<verse number="76">ನಮ್ಮ ದೇವರ ಮಮತೆಯ ಕರುಣೆಯಿಂದಲೇ, ಸ್ವರ್ಗದಿಂದ ನಮಗೆ ಅರುಣೋದಯವು ಉಂಟಾಗಿ</verse>
				<verse number="77">ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ವಾಸಿಸುವವರಿಗೆ ಪ್ರಕಾಶಿಸಿ, ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡೆಸುವಂತೆ ಮಾಡುವೆ.”</verse>
				<verse number="78">ಆ ಶಿಶುವಾದ ಯೋಹಾನನು ಬೆಳೆದು, ಆತ್ಮದಲ್ಲಿ ಬಲಗೊಂಡು; ತನ್ನನ್ನು ಇಸ್ರಾಯೇಲರಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.</verse>
			</chapter>
			<chapter number="2">
				<verse number="1">ಆ ದಿನಗಳಲ್ಲಿ ಇಡೀ ರೋಮನ್ ರಾಜ್ಯದಲ್ಲಿ ಜನಗಣತಿಯಾಗಬೇಕೆಂದು ಕೈಸರ್ ಔಗುಸ್ತನಿಂದ ಶಾಸನವು ಹೊರಟಿತು.</verse>
				<verse number="2">ಕುರೇನ್ಯನು ಸಿರಿಯ ಪ್ರಾಂತಕ್ಕೆ ಅಧಿಪತಿಯಾಗಿದ್ದಾಗ, ಈ ಜನಗಣತಿಯು ಮೊದಲನೆಯ ಸಾರಿ ನಡೆಯಿತು.</verse>
				<verse number="3">ಆಗ ಎಲ್ಲರೂ ತಮ್ಮ ಹೆಸರುಗಳನ್ನು ದಾಖಲೆ ಮಾಡಿಸಿಕೊಳ್ಳುವುದಕ್ಕಾಗಿ ತಮ್ಮ ತಮ್ಮ ಸ್ವಂತ ಪಟ್ಟಣಗಳಿಗೆ ಹೋದರು.</verse>
				<verse number="4">ಯೋಸೇಫನು ದಾವೀದನ ಕುಟುಂಬದವನೂ ವಂಶದವನೂ ಆಗಿದ್ದರಿಂದ, ಅವನು ಸಹ ಗಲಿಲಾಯ ಪ್ರಾಂತದ ನಜರೇತೆಂಬ ಪಟ್ಟಣದಿಂದ ಯೂದಾಯ ಪ್ರಾಂತದ ಬೇತ್ಲೆಹೇಮ್ ಎಂಬ ದಾವೀದನ ಪಟ್ಟಣಕ್ಕೆ ಹೋದನು.</verse>
				<verse number="5">ಅವನು ತನಗೆ ನಿಶ್ಚಯಿಸಿದ್ದ ಮತ್ತು ಪೂರ್ಣ ಗರ್ಭಿಣಿಯಾಗಿದ್ದ ಮರಿಯಳೊಂದಿಗೆ ಜನಗಣತಿಯ ದಾಖಲೆ ಮಾಡಿಸಿಕೊಳ್ಳುವುದಕ್ಕಾಗಿ ಹೋದನು.</verse>
				<verse number="6">ಅವರು ಬೇತ್ಲೆಹೇಮಿನಲ್ಲಿ ಇದ್ದಾಗ, ಆಕೆಗೆ ಹೆರಿಗೆಯ ಕಾಲ ಸಮೀಪಿಸಿತು.</verse>
				<verse number="7">ಮರಿಯಳು ತನ್ನ ಚೊಚ್ಚಲು ಮಗನನ್ನು ಹೆತ್ತು, ಬಟ್ಟೆಗಳಿಂದ ಸುತ್ತಿ, ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಶಿಶುವನ್ನು ದನದ ಕೊಟ್ಟಿಗೆಯಲ್ಲಿ ಮಲಗಿಸಿದಳು.</verse>
				<verse number="8">ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು, ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು.</verse>
				<verse number="9">ಆಗ ಕರ್ತದೇವರ ದೂತನು ಅವರಿಗೆ ಪ್ರತ್ಯಕ್ಷನಾದನು. ಕರ್ತದೇವರ ಮಹಿಮೆಯು ಅವರ ಸುತ್ತಲೂ ಪ್ರಕಾಶಿಸಿತು, ಅವರು ಬಹಳವಾಗಿ ಹೆದರಿದರು.</verse>
				<verse number="10">ಆ ದೂತನು ಅವರಿಗೆ, “ಹೆದರಬೇಡಿರಿ. ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಶುಭಸಮಾಚಾರವನ್ನು ನಾನು ನಿಮಗೆ ತಿಳಿಸುತ್ತೇನೆ.</verse>
				<verse number="11">ಅದೇನೆಂದರೆ, ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕರು ಹುಟ್ಟಿದ್ದಾರೆ. ಅವರು ಯಾರೆಂದರೆ ಕರ್ತದೇವರು ಆಗಿರುವ ಕ್ರಿಸ್ತ.</verse>
				<verse number="12">ಅಲ್ಲಿ ಬಟ್ಟೆಯಿಂದ ಸುತ್ತಿರುವ ಶಿಶುವು ಕೊಟ್ಟಿಗೆಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ. ಇದೇ ನಿಮಗೆ ಗುರುತು,” ಎಂದು ಹೇಳಿದನು.</verse>
				<verse number="13">ತಕ್ಷಣವೇ ಆ ದೂತನ ಸಂಗಡ ಇದ್ದ ಪರಲೋಕ ಸೈನ್ಯದ ಸಮೂಹವು ದೇವರನ್ನು ಕೊಂಡಾಡುತ್ತಾ ಹೀಗೆ ಹೇಳಿದರು:</verse>
				<verse number="14">“ಮಹೋನ್ನತದಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರ ಮೆಚ್ಚುಗೆ, ಮಾನವರಿಗೆ ಸಮಾಧಾನ.”</verse>
				<verse number="15">ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೋದ ಮೇಲೆ ಕುರುಬರು, “ದೇವರು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.</verse>
				<verse number="16">ಅವರು ಅವಸರದಿಂದ ಹೋಗಿ ಮರಿಯಳನ್ನೂ ಯೋಸೇಫನನ್ನೂ ಕೊಟ್ಟಿಗೆಯಲ್ಲಿ ಮಲಗಿದ್ದ ಶಿಶುವನ್ನು ಕಂಡರು.</verse>
				<verse number="17">ಅನಂತರ, ಈ ಶಿಶುವಿನ ವಿಷಯವಾಗಿ ತಮಗೆ ತಿಳಿಯಪಡಿಸಿದ ದೇವದೂತನ ಮಾತನ್ನು ಪ್ರಕಟಮಾಡಿದರು.</verse>
				<verse number="18">ಕುರುಬರು ಹೇಳಿದ ವಿಷಯಗಳನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.</verse>
				<verse number="19">ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟುಕೊಂಡು ಆಲೋಚಿಸುತ್ತಿದ್ದಳು.</verse>
				<verse number="20">ತಮಗೆ ತಿಳಿಸಿದ ಪ್ರಕಾರವೇ ಕುರುಬರು ತಾವು ಕೇಳಿ, ಕಂಡ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ, ಕೊಂಡಾಡುತ್ತಾ ಹಿಂದಿರುಗಿ ಹೋದರು.</verse>
				<verse number="21">ಶಿಶುವಿಗೆ ಸುನ್ನತಿ ಮಾಡಬೇಕಾಗಿದ್ದ ಎಂಟನೆಯ ದಿನದಲ್ಲಿ, ಮರಿಯಳು ಗರ್ಭಿಣಿಯಾಗುವುದಕ್ಕೆ ಮುಂಚೆಯೇ ದೂತನು ಸೂಚಿಸಿದ್ದಂತೆ “ಯೇಸು” ಎಂದು ನಾಮಕರಣ ಮಾಡಿದರು.</verse>
				<verse number="22">ಮೋಶೆಯ ನಿಯಮದ ಪ್ರಕಾರ ಮರಿಯಳಿಗೆ ಶುದ್ಧೀಕರಣದ ದಿವಸಗಳು ಮುಗಿದ ಮೇಲೆ, ಯೋಸೇಫನು ಮತ್ತು ಮರಿಯಳು ಶಿಶುವನ್ನು ಕರ್ತದೇವರಿಗೆ ಸಮರ್ಪಿಸುವುದಕ್ಕಾಗಿ ಯೆರೂಸಲೇಮಿಗೆ ತಂದರು.</verse>
				<verse number="23">ಕರ್ತದೇವರ ನಿಯಮದಲ್ಲಿ ಬರೆದಿರುವಂತೆ, “ಪ್ರತಿಯೊಂದು ಚೊಚ್ಚಲ ಗಂಡು ಮಗು ಕರ್ತದೇವರಿಗೆ ಪವಿತ್ರವಾಗಿ ಸಮರ್ಪಿಸಬೇಕು,”</verse>
				<verse number="24">ಎಂತಲೂ, “ಒಂದು ಜೊತೆ ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ಬಲಿ ಅರ್ಪಿಸಬೇಕು,” ಎಂತಲೂ ಕರ್ತದೇವರ ನಿಯಮದಲ್ಲಿ ಹೇಳಿರುವ ಪ್ರಕಾರ ಅವರು ಸಮರ್ಪಿಸಿದರು.</verse>
				<verse number="25">ಆಗ ಸಿಮೆಯೋನನೆಂಬ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಅವನು ನೀತಿವಂತನೂ ಭಕ್ತನೂ ಆಗಿದ್ದನು. ಅವನು ಇಸ್ರಾಯೇಲರನ್ನು ಸಂತೈಸುವ ಒಬ್ಬರ ಬರುವಿಕೆಗಾಗಿ ಕಾಯುತ್ತಿದ್ದನು. ಪವಿತ್ರಾತ್ಮ ದೇವರ ಪ್ರಸನ್ನತೆ ಅವನ ಮೇಲಿತ್ತು.</verse>
				<verse number="26">ಇದಲ್ಲದೆ, ಅವನು ಕರ್ತದೇವರು ಕಳುಹಿಸಲಿರುವ ಕ್ರಿಸ್ತನನ್ನು ಕಾಣುವುದಕ್ಕಿಂತ ಮುಂಚೆ ಮರಣ ಹೊಂದುವುದಿಲ್ಲವೆಂದು ಪವಿತ್ರಾತ್ಮನಿಂದ ಅವನಿಗೆ ಪ್ರಕಟನೆಯಾಗಿತ್ತು.</verse>
				<verse number="27">ಅವನು ಪವಿತ್ರಾತ್ಮ ಪ್ರೇರಣೆಯಿಂದ ದೇವಾಲಯದ ಅಂಗಳದೊಳಗೆ ಬಂದನು, ಆಗ ನಿಯಮವನ್ನು ಪೂರೈಸಲು ತಂದೆತಾಯಿಗಳು ಶಿಶು ಯೇಸುವನ್ನು ಒಳಗೆ ತಂದರು.</verse>
				<verse number="28">ಆಗ ಸಿಮೆಯೋನನು ಶಿಶುವನ್ನು ತನ್ನ ಕೈಗಳಲ್ಲಿ ತೆಗೆದುಕೊಂಡು ದೇವರನ್ನು ಕೊಂಡಾಡುತ್ತಾ ಹೀಗೆಂದನು:</verse>
				<verse number="29">“ಸರ್ವೇಶ್ವರರಾದ ಕರ್ತದೇವರೇ, ನಿಮ್ಮ ವಾಗ್ದಾನದ ಪ್ರಕಾರ, ನಿಮ್ಮ ದಾಸನನ್ನು ಸಮಾಧಾನದಿಂದ ಈಗ ಕಳುಹಿಸಿರಿ.</verse>
				<verse number="30">ನನ್ನ ಕಣ್ಣುಗಳು ನಿಮ್ಮ ರಕ್ಷಣೆಯನ್ನು ಕಂಡವು,</verse>
				<verse number="31">ಈ ರಕ್ಷಣೆಯನ್ನು ನೀವು ಎಲ್ಲಾ ಜನಗಳ ಮುಂದೆ ಸಿದ್ಧಪಡಿಸಿದ್ದೀರಿ:</verse>
				<verse number="32">ಅದು ಯೆಹೂದ್ಯರಲ್ಲದವರಿಗೆ ಪ್ರಕಟಣೆಯ ಬೆಳಕೂ, ನಿಮ್ಮ ಪ್ರಜೆಯಾದ ಇಸ್ರಾಯೇಲರ ಮಹಿಮೆಯೂ ಆಗಿದೆ.”</verse>
				<verse number="33">ಶಿಶುವಿನ ವಿಷಯವಾಗಿ ಸಿಮೆಯೋನನು ಹೇಳಿದ ಮಾತುಗಳಿಗೆ ಶಿಶುವಿನ ತಂದೆತಾಯಿಗಳು ಆಶ್ಚರ್ಯಪಟ್ಟರು.</verse>
				<verse number="34">ಅನಂತರ ಸಿಮೆಯೋನನು ಅವರನ್ನು ಆಶೀರ್ವದಿಸಿ, ಶಿಶುವಿನ ತಾಯಿ ಮರಿಯಳಿಗೆ, “ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವುದಕ್ಕೂ ಏಳುವುದಕ್ಕೂ ಈ ಮಗು ನೇಮಕವಾಗಿದೆ, ಜನರು ಎದುರು ಮಾತನಾಡುವುದಕ್ಕೆ ಈ ಮಗು ಗುರುತಾಗಿರುವದು.</verse>
				<verse number="35">ಹೀಗೆ ಅನೇಕ ಹೃದಯಗಳ ಆಲೋಚನೆಗಳು ಪ್ರಕಟವಾಗುವವು. ನಿನ್ನ ಸ್ವಂತ ಪ್ರಾಣವನ್ನು ಸಹ ಖಡ್ಗವು ತಿವಿಯುವುದು” ಎಂದನು.</verse>
				<verse number="36">ಅಲ್ಲಿ ಆಶೇರನ ಗೋತ್ರದ ಫನೂಯೇಲನ ಮಗಳಾದ ಅನ್ನಳೆಂಬ ಒಬ್ಬ ಬಹು ಮುಪ್ಪಿನ ಪ್ರವಾದಿನಿಯಿದ್ದಳು. ಅವಳು ಮದುವೆಯಾಗಿ ಗಂಡನೊಂದಿಗೆ ಏಳು ವರ್ಷ ಬಾಳಿದ್ದಳು.</verse>
				<verse number="37">ಅವಳು ಎಂಬತ್ತನಾಲ್ಕು ವರ್ಷ ವಿಧವೆಯಾಗಿದ್ದು, ದೇವಾಲಯವನ್ನು ಬಿಟ್ಟುಹೋಗದೆ ಉಪವಾಸಗಳಿಂದಲೂ ಪ್ರಾರ್ಥನೆಗಳಿಂದಲೂ ರಾತ್ರಿ ಹಗಲೂ ಆರಾಧನೆ ಮಾಡುತ್ತಿದ್ದಳು.</verse>
				<verse number="38">ಆ ಸಂದರ್ಭದಲ್ಲಿ ಅನ್ನಳು ಬಂದು, ದೇವರನ್ನು ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಶಿಶುವಿನ ವಿಷಯವಾಗಿ ಮಾತನಾಡಿದಳು.</verse>
				<verse number="39">ಯೋಸೇಫನೂ ಮರಿಯಳೂ ಕರ್ತದೇವರ ನಿಯಮದ ಪ್ರಕಾರ ಎಲ್ಲವನ್ನು ಮಾಡಿ ಮುಗಿಸಿದ ಮೇಲೆ, ತಮ್ಮ ಊರಾಗಿದ್ದ ಗಲಿಲಾಯದ ನಜರೇತಿಗೆ ಹಿಂದಿರುಗಿದರು.</verse>
				<verse number="40">ಆ ಶಿಶುವು ಬೆಳೆದು ಬಲಗೊಂಡು; ಜ್ಞಾನದಲ್ಲಿ ವೃದ್ಧಿಯಾಯಿತು ಮತ್ತು ದೇವರ ಕೃಪೆಯು ಶಿಶುವಿನ ಮೇಲೆ ಇತ್ತು.</verse>
				<verse number="41">ಯೇಸುವಿನ ತಂದೆತಾಯಿಗಳು ಪ್ರತಿವರ್ಷವೂ ಪಸ್ಕಹಬ್ಬಕ್ಕೆ ಯೆರೂಸಲೇಮಿಗೆ ಹೋಗುತ್ತಿದ್ದರು.</verse>
				<verse number="42">ಯೇಸುವಿಗೆ ಹನ್ನೆರಡು ವರ್ಷವಾದಾಗ, ಪದ್ಧತಿಯ ಪ್ರಕಾರ ಅವರು ಹಬ್ಬಕ್ಕಾಗಿ ಯೆರೂಸಲೇಮಿಗೆ ಹೋದರು.</verse>
				<verse number="43">ಅವರು ಆ ಹಬ್ಬವನ್ನು ಮುಗಿಸಿಕೊಂಡು ಹಿಂದಿರುಗಿ ಬರುವಾಗ ಬಾಲಕ ಯೇಸು ಯೆರೂಸಲೇಮಿನಲ್ಲಿಯೇ ಉಳಿದದ್ದು, ತಂದೆತಾಯಿಗಳಿಗೆ ತಿಳಿದಿರಲಿಲ್ಲ.</verse>
				<verse number="44">ಯೇಸು ಗುಂಪಿನಲ್ಲಿ ಇದ್ದಿರಬಹುದೆಂದು ಅವರು ಭಾವಿಸಿ, ಒಂದು ದಿನದ ಪ್ರಯಾಣವನ್ನು ಮಾಡಿದ ಮೇಲೆ ತಮ್ಮ ಬಳಗದವರಲ್ಲಿಯೂ ಪರಿಚಿತರಲ್ಲಿಯೂ ಬಾಲಕ ಯೇಸುವನ್ನು ಹುಡುಕಿದರು.</verse>
				<verse number="45">ಆದರೆ ಅವರು ಯೇಸುವನ್ನು ಕಂಡುಕೊಳ್ಳದೆ ಹೋದುದರಿಂದ, ಅವರನ್ನು ಹುಡುಕುತ್ತಾ ಪುನಃ ಯೆರೂಸಲೇಮಿಗೆ ಹಿಂತಿರುಗಿ ಬಂದರು.</verse>
				<verse number="46">ಮೂರು ದಿವಸಗಳಾದ ಮೇಲೆ ಯೇಸುವನ್ನು ದೇವಾಲಯದಲ್ಲಿ ಕಂಡರು. ಬೋಧಕರ ನಡುವೆ ಕೂತುಕೊಂಡು, ಬಾಲಕ ಯೇಸು ಅವರ ಮಾತುಗಳನ್ನು ಕೇಳಿಸಿಕೊಳ್ಳುತ್ತಾ, ಪ್ರಶ್ನಿಸುತ್ತಾ ಇರುವುದನ್ನು ಅವರು ಕಂಡರು.</verse>
				<verse number="47">ಯೇಸು ಆಡಿದ ಮಾತುಗಳನ್ನು ಕೇಳಿದವರೆಲ್ಲರೂ ಅವರ ಜ್ಞಾನಕ್ಕೂ ಉತ್ತರಗಳಿಗೂ ಬೆರಗಾದರು.</verse>
				<verse number="48">ತಂದೆತಾಯಿಗಳು ಯೇಸುವನ್ನು ಕಂಡಾಗ ಆಶ್ಚರ್ಯಪಟ್ಟರು. ಆತನ ತಾಯಿಯು, “ಮಗು, ನೀನು ನಮಗೆ ಹೀಗೇಕೆ ಮಾಡಿದೆ? ನಿನ್ನ ತಂದೆಯೂ ನಾನೂ ಎಷ್ಟೋ ಕಳವಳಗೊಂಡು ನಿನ್ನನ್ನು ಹುಡುಕಿದೆವು,” ಎಂದಳು.</verse>
				<verse number="49">ಯೇಸು ಅವರಿಗೆ, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕೆಂಬುದು ನಿಮಗೆ ತಿಳಿಯಲಿಲ್ಲವೋ?” ಎಂದರು.</verse>
				<verse number="50">ಆದರೆ ಯೇಸು ಅವರಿಗೆ ಹೇಳಿದ ಮಾತನ್ನು ಅವರು ಗ್ರಹಿಸಲಿಲ್ಲ.</verse>
				<verse number="51">ಬಳಿಕ ಯೇಸು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನರಾಗಿದ್ದರು. ಆದರೆ ಯೇಸುವಿನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು.</verse>
				<verse number="52">ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆದು, ದೇವರ ಮೆಚ್ಚುಗೆ ಮತ್ತು ಮನುಷ್ಯರ ಮೆಚ್ಚುಗೆ ಹೆಚ್ಚಾಗಿ ಅವರಿಗೆ ದೊರೆಯಿತು.</verse>
			</chapter>
			<chapter number="3">
				<verse number="1">ಕೈಸರ್ ತಿಬೇರಿಯನ ಆಳ್ವಿಕೆಯ ಕಾಲದ ಹದಿನೈದನೆಯ ವರ್ಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾಯಕ್ಕೆ ಚತುರಾಧಿಪತಿಯೂ ಅವನ ಸಹೋದರ ಫಿಲಿಪ್ಪನು ಇತುರಾಯ ಮತ್ತು ತ್ರಕೋನಿತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾಧಿಪತಿಯೂ ಆಗಿದ್ದಾಗ,</verse>
				<verse number="2">ಅನ್ನನು ಮತ್ತು ಕಾಯಫನು ಮಹಾಯಾಜಕರು ಆಗಿದ್ದ ಸಮಯದಲ್ಲಿ, ಅರಣ್ಯದಲ್ಲಿದ್ದ ಜಕರೀಯನ ಮಗ ಯೋಹಾನನಿಗೆ ದೇವರ ವಾಕ್ಯವುಂಟಾಯಿತು.</verse>
				<verse number="3">ಅವನು ಯೊರ್ದನ್ ನದಿಯ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು, ಪಾಪಗಳ ಪರಿಹಾರಕ್ಕಾಗಿ ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಪಡೆಯುವದರ ಕುರಿತು ಸಾರಿ ಹೇಳಿದನು.</verse>
				<verse number="4">ಇದರ ಬಗ್ಗೆ ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಮುಂಚಿತವಾಗಿ ಹೀಗೆಂದು ಬರೆದಿದೆ: “ಅರಣ್ಯದಲ್ಲಿ ಕೂಗುವವನ ಸ್ವರವು, ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ, ಅವರ ದಾರಿಗಳನ್ನು ಸರಾಗಮಾಡಿರಿ.</verse>
				<verse number="5">ಪ್ರತಿಯೊಂದು ಹಳ್ಳಕೊಳ್ಳಗಳೂ ಭರ್ತಿಯಾಗಬೇಕು, ಎಲ್ಲಾ ಬೆಟ್ಟಗುಡ್ಡಗಳು ನೆಲಸಮವಾಗಬೇಕು; ಡೊಂಕಾದ ರಸ್ತೆಗಳು ನೆಟ್ಟಗಾಗಬೇಕು, ಮತ್ತು ಕೊರಕಲಾದ ದಾರಿಗಳು ಸರಾಗವಾಗಬೇಕು;</verse>
				<verse number="6">ಮಾನವರೆಲ್ಲರೂ ದೇವರ ರಕ್ಷಣೆಯನ್ನು ಕಾಣುವರು.’ ”</verse>
				<verse number="7">ಆಗ ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ, ಯೋಹಾನನು, “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು?</verse>
				<verse number="8">ಹಾಗಾದರೆ ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ,’ ಎಂದು ನಿಮ್ಮೊಳಗೆ ಕೊಚ್ಚಿಕೊಳ್ಳಬೇಡಿರಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಮಕ್ಕಳನ್ನು ಹುಟ್ಟಿಸಲು ಶಕ್ತರೆಂದು ನಾನು ನಿಮಗೆ ಹೇಳುತ್ತೇನೆ.</verse>
				<verse number="9">ಮರಗಳ ಬೇರಿಗೆ ಈಗಾಗಲೇ ಕೊಡಲಿ ಬಿದ್ದಿದೆ, ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕಲಾಗುವುದು,” ಎಂದು ಹೇಳಿದನು.</verse>
				<verse number="10">ಆಗ ಜನರು, “ಹಾಗಾದರೆ ನಾವೇನು ಮಾಡಬೇಕು?” ಎಂದು ಕೇಳಿದರು.</verse>
				<verse number="11">ಅದಕ್ಕೆ ಯೋಹಾನನು ಉತ್ತರವಾಗಿ, “ಎರಡು ಅಂಗಿಗಳಿದ್ದರೆ ಇಲ್ಲದವನಿಗೆ ಒಂದನ್ನು ಕೊಡಲಿ, ಆಹಾರವುಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಹೇಳಿದನು.</verse>
				<verse number="12">ತರುವಾಯ ಸುಂಕದವರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಬಂದು ಯೋಹಾನನಿಗೆ, “ಬೋಧಕರೇ, ನಾವೇನು ಮಾಡಬೇಕು?” ಎಂದು ಕೇಳಿದರು.</verse>
				<verse number="13">ಅದಕ್ಕೆ ಯೋಹಾನನು ಅವರಿಗೆ, “ನಿಮಗೆ ಆಜ್ಞಾಪಿಸಿದ್ದಕ್ಕಿಂತ ಹೆಚ್ಚೇನೂ ವಸೂಲಿ ಮಾಡಬೇಡಿರಿ,” ಎಂದನು.</verse>
				<verse number="14">ಅದರಂತೆಯೇ ಸೈನಿಕರು, “ನಾವೇನು ಮಾಡಬೇಕು?” ಎಂದು ಕೇಳಿದರು. ಅದಕ್ಕೆ ಯೋಹಾನನು, “ಯಾರನ್ನೂ ಬೆದರಿಸಿ ಹಣ ತೆಗೆದುಕೊಳ್ಳಬೇಡಿರಿ. ಯಾರ ಮೇಲೆಯೂ ಸುಳ್ಳು ದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ,” ಎಂದು ಹೇಳಿದನು.</verse>
				<verse number="15">ಆಗ ಜನರು ಕ್ರಿಸ್ತನಿಗಾಗಿ ಎದುರುನೋಡುತ್ತಾ ಇದ್ದದ್ದರಿಂದ, ಯೋಹಾನನೇ ಕ್ರಿಸ್ತನಾಗಿರಬಹುದೋ ಏನೋ ಎಂದು ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು.</verse>
				<verse number="16">ಯೋಹಾನನು ಉತ್ತರವಾಗಿ ಅವರೆಲ್ಲರಿಗೆ: “ನಾನಂತೂ ನಿಮಗೆ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನಗಿಂತ ಶಕ್ತರೊಬ್ಬರು ಬರುತ್ತಾರೆ, ಅವರ ಪಾದರಕ್ಷೆಗಳ ದಾರವನ್ನು ಬಿಚ್ಚುವ ಗುಲಾಮನಾಗಿರುವುದಕ್ಕೂ ನಾನು ಯೋಗ್ಯನಲ್ಲ. ಅವರು ಪವಿತ್ರಾತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ದೀಕ್ಷಾಸ್ನಾನ ಮಾಡಿಸುವರು.</verse>
				<verse number="17">ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣವನ್ನು ಶುದ್ಧಮಾಡಿ ಗೋಧಿಯನ್ನು ತಮ್ಮ ಕಣಜದಲ್ಲಿ ಕೂಡಿಸುವರು. ಆದರೆ ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು.</verse>
				<verse number="18">ಯೋಹಾನನು ಇನ್ನೂ ಅನೇಕ ರೀತಿಗಳಿಂದ ಜನರನ್ನು ಎಚ್ಚರಿಸಿ ಅವರಿಗೆ ಸುವಾರ್ತೆಯನ್ನು ಸಾರುತ್ತಿದ್ದನು.</verse>
				<verse number="19">ಚತುರಾಧಿಪತಿಯಾದ ಹೆರೋದನು, ತನ್ನ ಸಹೋದರ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಇಟ್ಟುಕೊಂಡಿದ್ದನು ಮತ್ತು ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿ ಯೋಹಾನನು ಅವನನ್ನು ಬಹಿರಂಗವಾಗಿ ಗದರಿಸಿದ್ದರಿಂದ,</verse>
				<verse number="20">ಹೆರೋದನು ಯೋಹಾನನನ್ನು ಸೆರೆಯಲ್ಲಿ ಬಂಧಿಸಿ, ತನ್ನ ಎಲ್ಲಾ ದುಷ್ಕೃತ್ಯಗಳೊಂದಿಗೆ ಮತ್ತೊಂದನ್ನು ಕೂಡಿಸಿದ್ದನು.</verse>
				<verse number="21">ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು, ಆಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥಿಸುತ್ತಿರುವಲ್ಲಿ, ಸ್ವರ್ಗವು ತೆರೆಯಿತು.</verse>
				<verse number="22">ಆಗ ಪವಿತ್ರಾತ್ಮರು ದೇಹಾಕಾರವಾಗಿ ಪಾರಿವಾಳದಂತೆ ಯೇಸುವಿನ ಮೇಲೆ ಇಳಿದರು. ಆಗ, “ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ,” ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು.</verse>
				<verse number="23">ಯೇಸು ಸೇವೆಯನ್ನು ಪ್ರಾರಂಭಿಸಿದಾಗ ಹೆಚ್ಚು ಕಡಿಮೆ ಮೂವತ್ತು ವರ್ಷದವರಾಗಿದ್ದರು. ಯೇಸು ಜನರ ಎಣಿಕೆಯಲ್ಲಿ ಯೋಸೇಫನ ಮಗನು. ಯೋಸೇಫನು, ಹೇಲೀಯ ಮಗನು,</verse>
				<verse number="24">ಹೇಲೀಯನು ಮತ್ಥಾತನ ಮಗನು, ಮತ್ಥಾತನನು ಲೇವಿಯ ಮಗನು, ಲೇವಿಯನು ಮೆಲ್ಖಿಯ ಮಗನು, ಮೆಲ್ಖಿಯನು ಯನ್ನಾಯನ ಮಗನು, ಯನ್ನಾಯನು ಯೋಸೇಫನ ಮಗನು,</verse>
				<verse number="25">ಯೋಸೇಫನು ಮತ್ತಥೀಯನ ಮಗನು, ಮತ್ತಥೀಯನು ಆಮೋಸನ ಮಗನು, ಆಮೋಸನು ನಹೂಮನ ಮಗನು, ನಹೂಮನು ಎಸ್ಲಿಯ ಮಗನು, ಎಸ್ಲಿಯನು ನಗ್ಗಾಯನ ಮಗನು,</verse>
				<verse number="26">ನಗ್ಗಾಯನು ಮಹಾಥನ ಮಗನು, ಮಹಾಥನು ಮತ್ತಥೀಯನ ಮಗನು, ಮತ್ತಥೀಯನು ಶಿಮೀಯಿನ ಮಗನು, ಶಿಮೀಯಿನು ಯೊಸೇಖನ ಮಗನು, ಯೊಸೇಖನು ಯೋದನ ಮಗನು,</verse>
				<verse number="27">ಯೋದನು ಯೋಹಾನನ ಮಗನು, ಯೋಹಾನನು ರೇಸನ ಮಗನು, ರೇಸನು ಜೆರುಬ್ಬಾಬೆಲನ ಮಗನು, ಜೆರುಬ್ಬಾಬೆಲನು ಶೆಯಲ್ತೀಯೇಲನ ಮಗನು, ಶೆಯಲ್ತಿಯೇಲನು ನೇರಿಯನ ಮಗನು,</verse>
				<verse number="28">ನೇರಿಯನು ಮೆಲ್ಖಿಯನ ಮಗನು, ಮೆಲ್ಖಿಯನು ಅದ್ದಿಯನ ಮಗನು, ಅದ್ದಿಯನು ಕೋಸಾಮನ ಮಗನು, ಕೋಸಾಮನು ಎಲ್ಮದಾಮನ ಮಗನು, ಎಲ್ಮದಾಮನು ಏರನ ಮಗನು,</verse>
				<verse number="29">ಏರನು ಯೆಹೋಷುವನ ಮಗನು, ಯೆಹೋಷುವನು ಎಲೀಯೆಜೆರನ ಮಗನು, ಎಲಿಯೇಜರನು ಯೋರೈಮನ ಮಗನು, ಯೋರೈಮನು ಮತ್ಥಾತನ ಮಗನು, ಮತ್ಥಾತನು ಲೇವಿಯನ ಮಗನು,</verse>
				<verse number="30">ಲೇವಿಯನು ಸಿಮಿಯೋನನ ಮಗನು, ಸಿಮಿಯೋನನು ಯೂದನ ಮಗನು, ಯೂದನು ಯೋಸೇಫನ ಮಗನು, ಯೋಸೇಫನು ಯೋನಾಮನ ಮಗನು, ಯೋನಾಮನು ಎಲಿಯಕೀಮನ ಮಗನು,</verse>
				<verse number="31">ಎಲಿಯಕೀಮನು ಮೆಲೆಯಾನ ಮಗನು, ಮೆಲೆಯಾನು ಮೆನ್ನನ ಮಗನು, ಮೆನ್ನನು ಮತ್ತಾಥನ ಮಗನು, ಮತ್ತಾಥನು ನಾತಾನನ ಮಗನು, ನಾತಾನನು ದಾವೀದನ ಮಗನು,</verse>
				<verse number="32">ದಾವೀದನು ಇಷಯನ ಮಗನು, ಇಷಯನು ಓಬೇದನ ಮಗನು, ಓಬೇದನು ಬೋವಜನ ಮಗನು, ಬೋವಜನು ಸಲ್ಮೋನನ ಮಗನು, ಸಲ್ಮೋನನು ನಹಶೋನನ ಮಗನು,</verse>
				<verse number="33">ನಹಶೋನನು ಅಮ್ಮೀನಾದಾಬನ ಮಗನು, ಅಮ್ಮೀನಾದಾಬನು ಆರ್ನೈಯನ ಮಗನು, ಆರ್ನೈಯನು ಹೆಚ್ರೋನನ ಮಗನು, ಹೆಚ್ರೋನನು ಪೆರೆಸನ ಮಗನು, ಪೆರೆಸನು ಯೂದನ ಮಗನು,</verse>
				<verse number="34">ಯೂದನು ಯಾಕೋಬನ ಮಗನು, ಯಾಕೋಬನು ಇಸಾಕನ ಮಗನು, ಇಸಾಕನು ಅಬ್ರಹಾಮನ ಮಗನು, ಅಬ್ರಹಾಮನು ತೇರನ ಮಗನು, ತೇರನು ನಹೋರನ ಮಗನು,</verse>
				<verse number="35">ನಹೋರನು ಸೆರೂಗನ ಮಗನು, ಸೆರೂಗನು ರೆಗೂವನ ಮಗನು, ರೆಗೂವನು ಪೆಲೆಗನ ಮಗನು, ಪೆಲೆಗನು ಹೆಬೆರನ ಮಗನು, ಹೆಬೆರನು ಶೆಲಹ ಮಗನು,</verse>
				<verse number="36">ಶೆಲಹ ಕಯಿನಾನನ ಮಗನು, ಕಯಿನಾನನು ಅರ್ಫಕ್ಷಾದನ ಮಗನು, ಅರ್ಫಕ್ಷಾದನು ಶೇಮನ ಮಗನು, ಶೇಮನು ನೋಹನ ಮಗನು, ನೋಹನು ಲಾಮೆಕನ ಮಗನು,</verse>
				<verse number="37">ಲಾಮೆಕನು ಮತೂಷಲನ ಮಗನು, ಮತೂಷಲನು ಹನೋಕನ ಮಗನು, ಹನೋಕನು ಯೆರೆದನ ಮಗನು, ಯೆರೆದನು ಮಹಲಲೇಲನ ಮಗನು, ಮಹಲಲೇಲನು ಕಯಿನಾನನ ಮಗನು,</verse>
				<verse number="38">ಕಯಿನಾನನು ಎನೋಷನ ಮಗನು, ಎನೋಷನು ಸೇಥನ ಮಗನು, ಸೇತನು ಆದಾಮನ ಮಗನು, ಆದಾಮನು ದೇವರ ಮಗನು.</verse>
			</chapter>
			<chapter number="4">
				<verse number="1">ಯೇಸು ಪವಿತ್ರಾತ್ಮಭರಿತರಾಗಿ, ಯೊರ್ದನ್ ನದಿ ತೀರದಿಂದ ಹಿಂದಿರುಗಿ ಬಂದು, ದೇವರಾತ್ಮರಿಂದ ಅರಣ್ಯದೊಳಕ್ಕೆ ಮಾರ್ಗದರ್ಶನ ಹೊಂದಿ,</verse>
				<verse number="2">ನಲವತ್ತು ದಿನಗಳು ಸೈತಾನನಿಂದ ಶೋಧನೆಯನ್ನು ಎದುರಿಸಿದರು. ಆ ದಿನಗಳಲ್ಲಿ ಯೇಸು ಏನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಯೇಸುವಿಗೆ ಹಸಿವಾಯಿತು.</verse>
				<verse number="3">ಸೈತಾನನು ಯೇಸುವಿಗೆ, “ನೀನು ದೇವರ ಪುತ್ರನಾಗಿದ್ದರೆ, ಈ ಕಲ್ಲಿಗೆ ರೊಟ್ಟಿಯಾಗುವಂತೆ ಹೇಳು,” ಎಂದನು.</verse>
				<verse number="4">ಅದಕ್ಕೆ ಯೇಸು ಉತ್ತರವಾಗಿ ಅವನಿಗೆ, “ ‘ಮನುಷ್ಯನು ಜೀವಿಸುವುದು ರೊಟ್ಟಿಯಿಂದ ಮಾತ್ರವಲ್ಲ’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.</verse>
				<verse number="5">ಸೈತಾನನು ಯೇಸುವನ್ನು ಎತ್ತರವಾದ ಒಂದು ಸ್ಥಳಕ್ಕೆ ಕರೆದುಕೊಂಡು ಹೋಗಿ, ಲೋಕದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ಅವರಿಗೆ ತೋರಿಸಿದನು.</verse>
				<verse number="6">ಅನಂತರ ಸೈತಾನನು ಯೇಸುವಿಗೆ, “ಈ ಎಲ್ಲಾ ರಾಜ್ಯಗಳ ಅಧಿಕಾರವನ್ನೂ ಇವುಗಳ ಮಹಿಮೆಯನ್ನೂ ನಾನು ನಿನಗೆ ಕೊಡುವೆನು. ಇವೆಲ್ಲಾ ನನಗೆ ಕೊಟ್ಟಿರುವುದರಿಂದ ನನಗೆ ಇಷ್ಟ ಬಂದ ಯಾರಿಗಾದರೂ ನಾನು ಕೊಡುವೆನು.</verse>
				<verse number="7">ಆದ್ದರಿಂದ ನೀನು ನನ್ನನ್ನು ಆರಾಧಿಸಿದರೆ, ಎಲ್ಲವೂ ನಿನ್ನದಾಗುವವು,” ಎಂದು ಹೇಳಿದನು.</verse>
				<verse number="8">ಯೇಸು ಅವನಿಗೆ ಉತ್ತರವಾಗಿ, “ ‘ನಿನ್ನ ದೇವರಾದ ಕರ್ತದೇವರನ್ನು ಆರಾಧಿಸಿ, ಅವರಿಗೆ ಮಾತ್ರವೇ ಸೇವೆ ಸಲ್ಲಿಸಬೇಕು,’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದರು.</verse>
				<verse number="9">ಸೈತಾನನು ಯೇಸುವನ್ನು ಯೆರೂಸಲೇಮಿಗೆ ಕರೆತಂದು ದೇವಾಲಯದ ಅತಿ ಎತ್ತರವಾದ ಶಿಖರದ ಮೇಲೆ ನಿಲ್ಲಿಸಿ ಯೇಸುವಿಗೆ, “ನೀನು ದೇವರ ಪುತ್ರನಾಗಿದ್ದರೆ ಇಲ್ಲಿಂದ ಕೆಳಕ್ಕೆ ಧುಮುಕು,</verse>
				<verse number="10">ಏಕೆಂದರೆ ಪವಿತ್ರ ವೇದದಲ್ಲಿ ಬರೆದಿರುವಂತೆ: “ ‘ದೇವರು ನಿನ್ನನ್ನು ಕಾಪಾಡುವುದಕ್ಕೆ ತಮ್ಮ ದೂತರಿಗೆ ಆಜ್ಞಾಪಿಸುವರು</verse>
				<verse number="11">ಮತ್ತು ನಿನ್ನ ಪಾದಗಳು ಕಲ್ಲಿಗೆ ತಗಲದಂತೆ, ದೂತರು ನಿನ್ನನ್ನು ತಮ್ಮ ಕೈಗಳಲ್ಲಿ ಎತ್ತಿಕೊಳ್ಳುವರು,’ ” ಎಂದನು.</verse>
				<verse number="12">ಅದಕ್ಕೆ ಯೇಸು ಅವನಿಗೆ, “ ‘ನಿನ್ನ ದೇವರಾದ ಕರ್ತದೇವರನ್ನು ಪರೀಕ್ಷಿಸಬಾರದು,’ ಎಂದೂ ಹೇಳಿದೆ,” ಎಂದು ಉತ್ತರಕೊಟ್ಟರು.</verse>
				<verse number="13">ಸೈತಾನನು ಯೇಸುವನ್ನು ನಾನಾರೀತಿಯಲ್ಲಿ ಶೋಧಿಸಿದ ಮೇಲೆ, ತಕ್ಕಕಾಲ ಬರುವ ತನಕ ಅವರನ್ನು ಬಿಟ್ಟು ಹೊರಟುಹೋದನು.</verse>
				<verse number="14">ಯೇಸು ಪವಿತ್ರಾತ್ಮರ ಶಕ್ತಿಯಿಂದ ಗಲಿಲಾಯಕ್ಕೆ ಹಿಂದಿರುಗಿದರು. ಅವರ ಸುದ್ದಿಯು ಸುತ್ತಮುತ್ತೆಲ್ಲಾ ಹರಡಿತು.</verse>
				<verse number="15">ಯೇಸು ಯೆಹೂದ್ಯರ ಸಭಾಮಂದಿರಗಳಲ್ಲಿ ಬೋಧಿಸಿದ್ದರಿಂದ, ಎಲ್ಲರೂ ಅವರನ್ನು ಹೊಗಳಿದರು.</verse>
				<verse number="16">ಯೇಸು ತಾವು ಬೆಳೆದ ನಜರೇತಿಗೆ ಬಂದು, ತಮ್ಮ ಪದ್ಧತಿಯಂತೆ ಸಬ್ಬತ್ ದಿನದಲ್ಲಿ ಸಭಾಮಂದಿರದೊಳಕ್ಕೆ ಹೋಗಿ ಪವಿತ್ರ ವೇದದ ಸುರುಳಿಯನ್ನು ಓದುವುದಕ್ಕಾಗಿ ಎದ್ದು ನಿಂತರು.</verse>
				<verse number="17">ಯೇಸುವಿನ ಕೈಗೆ ಪ್ರವಾದಿ ಯೆಶಾಯನ ಗ್ರಂಥದ ಸುರುಳಿಯನ್ನು ಕೊಟ್ಟರು. ಯೇಸು ಅದನ್ನು ಬಿಚ್ಚಿ, ಅದರಲ್ಲಿ ಬರೆದಿರುವ ಈ ವಾಕ್ಯಗಳನ್ನು ಕಂಡು ಓದಿದರು:</verse>
				<verse number="18">“ಕರ್ತದೇವರ ಆತ್ಮರು ನನ್ನ ಮೇಲೆ ಇದ್ದಾರೆ, ಅವರು ನನ್ನನ್ನು ಬಡವರಿಗೆ ಸುವಾರ್ತೆ ಸಾರುವುದಕ್ಕೆ ಅಭಿಷೇಕಿಸಿದ್ದಾರೆ. ಸೆರೆಯಲ್ಲಿದ್ದವರಿಗೆ ಬಿಡುಗಡೆಯನ್ನು ಸಾರುವುದಕ್ಕೂ, ಕುರುಡರಿಗೆ ದೃಷ್ಟಿ ಕೊಡುವುದಕ್ಕೂ, ಜಜ್ಜಿ ಹೋದವರನ್ನು ಬಿಡಿಸಿ ಕಳುಹಿಸುವುದಕ್ಕೂ,</verse>
				<verse number="19">ಕರ್ತದೇವರ ಮೆಚ್ಚುಗೆಯ ವರ್ಷವನ್ನು ಸಾರುವುದಕ್ಕೂ ಅವರು ನನ್ನನ್ನು ಕಳುಹಿಸಿದ್ದಾರೆ.”</verse>
				<verse number="20">ಯೇಸು ಗ್ರಂಥದ ಸುರುಳಿಯನ್ನು ಸುತ್ತಿ, ಪರಿಚಾರಕನ ಕೈಗೆ ಕೊಟ್ಟು ಕುಳಿತುಕೊಂಡರು. ಆಗ ಆ ಸಭಾಮಂದಿರದಲ್ಲಿ ಇದ್ದವರೆಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು.</verse>
				<verse number="21">ಯೇಸು ಅವರಿಗೆ, “ನೀವು ಕೇಳುತ್ತಿದ್ದಂತೆಯೇ ಈ ಪವಿತ್ರ ವೇದದ ವಾಕ್ಯವು ಇಂದು ನೆರವೇರಿತು,” ಎಂದು ಹೇಳಲಾರಂಭಿಸಿದರು.</verse>
				<verse number="22">ಎಲ್ಲರೂ ಅವರನ್ನು ಹೊಗಳಿದರು. ಯೇಸುವಿನ ಬಾಯಿಂದ ಬಂದ ಕೃಪೆಯುಳ್ಳ ಮಾತುಗಳಿಗೆ ಆಶ್ಚರ್ಯಪಟ್ಟು, “ಈತನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.</verse>
				<verse number="23">ಯೇಸು ಅವರಿಗೆ, “ ‘ವೈದ್ಯನೇ, ನಿನ್ನನ್ನು ನೀನೇ ವಾಸಿಮಾಡಿಕೋ!’ ಎಂಬ ಗಾದೆಯನ್ನು ನೀವು ನಿಸ್ಸಂದೇಹವಾಗಿ ನನಗೆ ಹೇಳಿ, ‘ಕಪೆರ್ನೌಮಿನಲ್ಲಿ ಎಂತೆಂಥ ಕಾರ್ಯಗಳು ನಡೆಯಿತೆಂದು ನಾವು ಕೇಳಿದೆವು. ಅದನ್ನು ಇಲ್ಲಿ ನಿನ್ನ ಸ್ವಂತ ಊರಿನಲ್ಲಿಯೂ ಮಾಡು’ ಎಂದು ನನಗೆ ಹೇಳುವಿರಿ,” ಎಂದರು.</verse>
				<verse number="24">ಯೇಸು ಮುಂದುವರಿಸಿ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ಯಾವ ಪ್ರವಾದಿಯೂ ಸ್ವಂತ ಊರಿನಲ್ಲಿ ಸ್ವೀಕಾರವಾಗುವುದಿಲ್ಲ.</verse>
				<verse number="25">ನಿಮಗೆ ಸತ್ಯವನ್ನು ಹೇಳುತ್ತೇನೆ: ಎಲೀಯನ ದಿವಸಗಳಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ, ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರು.</verse>
				<verse number="26">ಅವರಲ್ಲಿ ಯಾರ ಬಳಿಗೂ ದೇವರು ಎಲೀಯನನ್ನು ಕಳುಹಿಸದೆ ಸೀದೋನ್ ಪಟ್ಟಣದ ಸರೆಪ್ತದಲ್ಲಿದ್ದ ಒಬ್ಬ ವಿಧವೆಯ ಬಳಿಗೆ ಕಳುಹಿಸಿದರು.</verse>
				<verse number="27">ಹಾಗೆಯೇ, ಪ್ರವಾದಿ ಎಲೀಷನ ಕಾಲದಲ್ಲಿ ಅನೇಕ ಕುಷ್ಠರೋಗಿಗಳು ಇಸ್ರಾಯೇಲಿನಲ್ಲಿದ್ದರೂ ಸಿರಿಯದ ನಾಮಾನನ ಹೊರತು ಅವರಲ್ಲಿ ಬೇರೆ ಯಾರೂ ಶುದ್ಧರಾಗಲಿಲ್ಲ,” ಎಂದರು.</verse>
				<verse number="28">ಆಗ ಸಭಾಮಂದಿರದಲ್ಲಿ ಇದ್ದವರೆಲ್ಲರೂ ಇವುಗಳನ್ನು ಕೇಳಿ ಬಹು ಕೋಪಗೊಂಡರು.</verse>
				<verse number="29">ಅವರು ಮೇಲಕ್ಕೆದ್ದು, ಯೇಸುವನ್ನು ಪಟ್ಟಣದ ಹೊರಗೆ ದಬ್ಬಬೇಕೆಂದು, ತಮ್ಮ ಬೆಟ್ಟದ ಮೇಲೆ ಕಟ್ಟಿರುವ ಪಟ್ಟಣದ ಕಡಿದಾದ ಸ್ಥಳಕ್ಕೆ ಅವರನ್ನು ಹಿಡಿದುಕೊಂಡು ಹೋದರು.</verse>
				<verse number="30">ಆದರೆ ಯೇಸು ಅವರ ಮಧ್ಯದಿಂದ ಹಾದು ಹೊರಟು ಹೋದರು.</verse>
				<verse number="31">ಯೇಸು ಗಲಿಲಾಯದ ಕಪೆರ್ನೌಮಿಗೆ ಬಂದು, ಸಬ್ಬತ್ ದಿನಗಳಲ್ಲಿ ಅವರಿಗೆ ಬೋಧಿಸುತ್ತಿದ್ದರು.</verse>
				<verse number="32">ಯೇಸುವಿನ ಬೋಧನೆಯನ್ನು ಕೇಳಿ ಜನರು ಆಶ್ಚರ್ಯಪಟ್ಟರು. ಏಕೆಂದರೆ ಅವರ ವಾಕ್ಯವು ಅಧಿಕಾರದಿಂದ ಕೂಡಿದ್ದಾಗಿತ್ತು.</verse>
				<verse number="33">ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಅವನು ಗಟ್ಟಿಯಾಗಿ ಕಿರುಚುತ್ತಾ,</verse>
				<verse number="34">“ನಜರೇತಿನ ಯೇಸುವೇ, ನಮ್ಮ ಗೊಡವೆ ನಿಮಗೆ ಏಕೆ? ನಮ್ಮನ್ನು ನಾಶಮಾಡುವುದಕ್ಕಾಗಿ ಬಂದಿರಾ? ನೀವು ಯಾರೆಂದು ನಾನು ಬಲ್ಲೆನು. ನೀವು ದೇವರ ಪರಿಶುದ್ಧರು,” ಎಂದು ಹೇಳಿದನು.</verse>
				<verse number="35">ಆಗ ಯೇಸು ಅವನನ್ನು ಗದರಿಸಿ, “ಸುಮ್ಮನಿರು, ಅವನೊಳಗಿಂದ ಹೊರಗೆ ಬಾ,” ಎಂದರು. ಆ ದೆವ್ವವು ಅವನನ್ನು ಮಧ್ಯದಲ್ಲಿ ಕೆಡವಿ, ಬಾಧಿಸದೆ ಅವನೊಳಗಿಂದ ಹೊರಗೆ ಬಂತು.</verse>
				<verse number="36">ಜನರೆಲ್ಲರೂ ಬೆರಗಾಗಿ, “ಇದೆಂಥಾ ಮಾತಾಗಿದೆ! ಈತನು ಅಧಿಕಾರದಿಂದಲೂ ಶಕ್ತಿಯಿಂದಲೂ ಅಶುದ್ಧಾತ್ಮಗಳಿಗೆ ಅಪ್ಪಣೆಕೊಡಲು ಅವು ಹೊರಗೆ ಬರುತ್ತವಲ್ಲಾ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.</verse>
				<verse number="37">ಯೇಸುವಿನ ಸುದ್ದಿಯು ಸುತ್ತಲಿನ ಪ್ರದೇಶದ ಪ್ರತಿಯೊಂದು ಸ್ಥಳದಲ್ಲಿ ಹರಡಿತು.</verse>
				<verse number="38">ಯೇಸು ಸಭಾಮಂದಿರದಿಂದ ಎದ್ದು ಸೀಮೋನನ ಮನೆಗೆ ಹೋದರು. ಅಲ್ಲಿ ಸೀಮೋನನ ಅತ್ತೆಗೆ ಕಠಿಣ ಜ್ವರವಿದ್ದುದರಿಂದ ಅಲ್ಲಿದ್ದವರು ಆಕೆಗೆ ಸಹಾಯ ಮಾಡಬೇಕೆಂದು ಯೇಸುವನ್ನು ಬೇಡಿಕೊಂಡರು.</verse>
				<verse number="39">ಆಗ ಯೇಸು ಆಕೆಯ ಬಳಿಯಲ್ಲಿ ನಿಂತು ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೇ ಆಕೆಯು ಎದ್ದು ಅವರನ್ನು ಉಪಚರಿಸಿದಳು.</verse>
				<verse number="40">ಸಂಜೆಯಾದ ನಂತರ, ನಾನಾ ವಿಧವಾದ ರೋಗಗಳಿಂದ ಅಸ್ವಸ್ಥರಾದವರೆಲ್ಲರನ್ನು ಜನರು ಯೇಸುವಿನ ಬಳಿಗೆ ಕರೆತಂದರು, ಅವರಲ್ಲಿ ಪ್ರತಿಯೊಬ್ಬನ ಮೇಲೆ ಯೇಸು ತಮ್ಮ ಕೈಗಳನ್ನಿಟ್ಟು ಅವರನ್ನು ಸ್ವಸ್ಥಪಡಿಸಿದರು.</verse>
				<verse number="41">ಅನೇಕರೊಳಗಿಂದ, ದೆವ್ವಗಳು ಸಹ ಹೊರಗೆ ಬಂದು, “ನೀವು ದೇವರ ಪುತ್ರ” ಎಂದು ಅರಚಿದವು. ಯೇಸು ಅವುಗಳನ್ನು ಗದರಿಸಿ ಮಾತನಾಡಬಾರದೆಂದು ಹೇಳಿದರು. ಏಕೆಂದರೆ ಅವರೇ ಕ್ರಿಸ್ತನೆಂದು ಅವುಗಳಿಗೆ ಗೊತ್ತಿತ್ತು.</verse>
				<verse number="42">ಬೆಳಗಾದ ಮೇಲೆ, ಯೇಸು ಏಕಾಂತ ಸ್ಥಳಕ್ಕೆ ಹೊರಟು ಹೋದರು. ಜನರು ಅವರನ್ನು ಹುಡುಕಿಕೊಂಡು ಅವರ ಬಳಿಗೆ ಬಂದು ತಮ್ಮನ್ನು ಬಿಟ್ಟು ಹೋಗಬಾರದೆಂದು ಅವರನ್ನು ತಡೆದರು.</verse>
				<verse number="43">ಆದರೆ ಯೇಸು ಅವರಿಗೆ, “ಬೇರೆ ಪಟ್ಟಣಗಳಿಗೂ ದೇವರ ರಾಜ್ಯದ ಸುವಾರ್ತೆಯನ್ನು ನಾನು ಸಾರಬೇಕಾಗಿದೆ. ನನ್ನನ್ನು ಕಳುಹಿಸಿರುವುದು ಇದಕ್ಕಾಗಿಯೇ,” ಎಂದರು.</verse>
				<verse number="44">ಅನಂತರ ಯೇಸು ಯೂದಾಯದ ಸಭಾಮಂದಿರಗಳಲ್ಲಿ ಸುವಾರ್ತೆ ಸಾರುತ್ತಾ ಇದ್ದರು.</verse>
			</chapter>
			<chapter number="5">
				<verse number="1">ಒಂದು ದಿನ ಯೇಸು ಗೆನೆಜರೇತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ, ಜನರು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಅವರ ಸುತ್ತಲೂ ಗುಂಪಾಗಿ ಕೂಡಿದ್ದರು.</verse>
				<verse number="2">ಯೇಸು ಕೆರೆಯ ಬಳಿಯಲ್ಲಿ ಎರಡು ದೋಣಿಗಳನ್ನು ಕಂಡರು. ಅಲ್ಲಿ ಬೆಸ್ತರು ಅವುಗಳಿಂದ ಹೊರಗೆ ಹೋಗಿ ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.</verse>
				<verse number="3">ಅವುಗಳಲ್ಲಿ ಸೀಮೋನನ ದೋಣಿಯನ್ನು, ಯೇಸು ಹತ್ತಿ ಅದನ್ನು ದಡದಿಂದ ಸ್ವಲ್ಪ ದೂರ ನೂಕಬೇಕೆಂದು ಅವನನ್ನು ಕೇಳಿಕೊಂಡರು. ಆಮೇಲೆ ಯೇಸು ಕುಳಿತುಕೊಂಡು ದೋಣಿಯೊಳಗಿಂದಲೇ ಜನರಿಗೆ ಬೋಧಿಸಿದರು.</verse>
				<verse number="4">ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, “ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ, ಮೀನು ಹಿಡಿಯುವುದಕ್ಕೆ ನಿಮ್ಮ ಬಲೆಗಳನ್ನು ಬೀಸಿರಿ,” ಎಂದರು.</verse>
				<verse number="5">ಅದಕ್ಕೆ ಉತ್ತರವಾಗಿ ಸೀಮೋನನು ಯೇಸುವಿಗೆ, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯಾಸಪಟ್ಟರೂ ಏನೂ ಸಿಕ್ಕಲಿಲ್ಲ. ಆದರೂ ನಿಮ್ಮ ಮಾತಿನಂತೆ ನಾನು ಬಲೆಯನ್ನು ಬೀಸುತ್ತೇನೆ,” ಎಂದು ಹೇಳಿದನು.</verse>
				<verse number="6">ಅವರು ಅದರಂತೆ ಬಲೆ ಹಾಕಿದಾಗ, ಮೀನಿನ ದೊಡ್ಡ ರಾಶಿಯನ್ನು ಹಿಡಿದರು ಅವರ ಬಲೆಯು ಹರಿಯುವಂತಾಯಿತು.</verse>
				<verse number="7">ಆಗ ಬೇರೆ ದೋಣಿಯಲ್ಲಿದ್ದ ತಮ್ಮ ಪಾಲುಗಾರರು ಬಂದು ತಮಗೆ ಸಹಾಯ ಮಾಡಬೇಕೆಂದು ಅವರು ಸನ್ನೆಮಾಡಿದರು. ಪಾಲುಗಾರರು ಬಂದು ಎರಡು ದೋಣಿಗಳನ್ನು ತುಂಬಿಸಲಾಗಿ ಅವು ಮುಳುಗಲಾರಂಭಿಸಿದವು.</verse>
				<verse number="8">ಸೀಮೋನ್ ಪೇತ್ರನು ಇದನ್ನು ಕಂಡಾಗ, ಯೇಸುವಿನ ಮುಂದೆ ಮೊಣಕಾಲೂರಿ, “ಸ್ವಾಮಿ, ನನ್ನನ್ನು ಬಿಟ್ಟು ಹೋಗಿರಿ, ನಾನು ಪಾಪಿ,” ಎಂದನು.</verse>
				<verse number="9">ಯಾಕಂದರೆ, ಅವರು ಹಿಡಿದ ಮೀನುಗಳ ರಾಶಿಯನ್ನು ಕಂಡು ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು.</verse>
				<verse number="10">ಸೀಮೋನನ ಕೂಡ ಪಾಲುಗಾರರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ, ಯೋಹಾನರೂ ಹಾಗೆಯೇ ವಿಸ್ಮಯಗೊಂಡಿದ್ದರು. ಆಗ ಯೇಸು ಸೀಮೋನನಿಗೆ, “ಹೆದರಬೇಡ; ಇಂದಿನಿಂದ ನೀನು ದೇವರಿಗಾಗಿ ಮನುಷ್ಯರನ್ನೇ ಹಿಡಿಯುವವನಾಗಿರುವೆ, ” ಎಂದರು.</verse>
				<verse number="11">ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದು ಎಲ್ಲವನ್ನು ಬಿಟ್ಟು, ಯೇಸುವನ್ನೇ ಹಿಂಬಾಲಿಸಿದರು.</verse>
				<verse number="12">ಯೇಸು ಒಂದು ಪಟ್ಟಣದಲ್ಲಿದ್ದಾಗ, ಮೈಯೆಲ್ಲಾ ಕುಷ್ಠರೋಗವಿದ್ದ ಒಬ್ಬ ಮನುಷ್ಯನು ಯೇಸುವನ್ನು ಕಂಡು ಅಡ್ಡಬಿದ್ದು ಅವರಿಗೆ, “ಸ್ವಾಮಿ, ನಿಮಗೆ ಮನಸ್ಸಿದ್ದರೆ, ನೀವು ನನ್ನನ್ನು ಶುದ್ಧಮಾಡಬಲ್ಲಿರಿ,” ಎಂದು ಅವರನ್ನು ಬೇಡಿಕೊಂಡನು.</verse>
				<verse number="13">ಯೇಸು ತಮ್ಮ ಕೈಚಾಚಿ ಅವನನ್ನು ಮುಟ್ಟಿ ಅವನಿಗೆ, “ನನಗೆ ಮನಸ್ಸಿದೆ, ನೀನು ಶುದ್ಧನಾಗು!” ಎಂದು ಹೇಳಿದರು. ಕೂಡಲೇ ಆ ಕುಷ್ಠವು ಅವನನ್ನು ಬಿಟ್ಟುಹೋಯಿತು.</verse>
				<verse number="14">ಆಗ ಯೇಸು ಅವನಿಗೆ, “ಇದನ್ನು ನೀನು ಯಾರಿಗೂ ಹೇಳಬೇಡ, ಆದರೆ ನೀನು ಗುಣಹೊಂದಿದ್ದಕ್ಕೆ ಜನರಿಗೆ ಸಾಕ್ಷಿಯಾಗಿರುವಂತೆ ಹೋಗಿ ಯಾಜಕನಿಗೆ ನಿನ್ನನ್ನು ತೋರಿಸಿಕೊಂಡು ನಿನ್ನ ಶುದ್ಧಾಚಾರಕ್ಕಾಗಿ ಮೋಶೆ ಅಪ್ಪಣೆ ಕೊಟ್ಟಂತೆ ಅರ್ಪಿಸು,” ಎಂದು ಆಜ್ಞಾಪಿಸಿದರು.</verse>
				<verse number="15">ಆದರೂ ಯೇಸುವಿನ ವಿಷಯವು, ಇನ್ನೂ ಹೆಚ್ಚಾಗಿ ದೂರದವರೆಗೂ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳನ್ನು ಅವರಿಂದ ವಾಸಿಮಾಡಿಸಿಕೊಳ್ಳುವುದಕ್ಕೂ ದೊಡ್ಡ ಸಮೂಹಗಳು ಕೂಡಿ ಬಂದವು.</verse>
				<verse number="16">ಆದರೆ ಯೇಸು ತಮ್ಮನ್ನು ಪ್ರತ್ಯೇಕಿಸಿಕೊಂಡು ಎಂದಿನಂತೆ ಏಕಾಂತ ಸ್ಥಳಕ್ಕೆ ಹೋಗಿ ಪ್ರಾರ್ಥಿಸುತ್ತಿದ್ದರು.</verse>
				<verse number="17">ಒಂದು ದಿನ ಯೇಸು ಬೋಧಿಸುತ್ತಿದ್ದಾಗ, ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನಿಯಮ ಬೋಧಕರೂ ಅಲ್ಲಿ ಕುಳಿತುಕೊಂಡಿದ್ದರು. ಯೇಸುವಿನಲ್ಲಿ ಸ್ವಸ್ಥಮಾಡುವುದಕ್ಕಾಗಿ ದೇವರ ಶಕ್ತಿಯು ಇತ್ತು.</verse>
				<verse number="18">ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯಲ್ಲಿ ಹೊತ್ತುಕೊಂಡು ಬಂದು, ಒಳಗೆ ಯೇಸುವಿನ ಎದುರಿಗೆ ತರುವುದಕ್ಕೆ ಪ್ರಯತ್ನಿಸುತ್ತಿದ್ದರು.</verse>
				<verse number="19">ಆದರೆ ಅಲ್ಲಿದ್ದ ಜನಸಮೂಹದವರ ನಿಮಿತ್ತ ಅವರು ಅವನನ್ನು ಒಳಗೆ ತರುವ ಯಾವ ವಿಧಾನವನ್ನೂ ಕಾಣದೆ, ಮನೆಯ ಮೇಲೆ ಹೋಗಿ ಹೆಂಚುಗಳನ್ನು ತೆಗೆದು ಅವನನ್ನು ಹಾಸಿಗೆಯೊಂದಿಗೆ ಯೇಸುವಿನ ಮುಂದೆ ಇಳಿಸಿದರು.</verse>
				<verse number="20">ಯೇಸು ಅವರ ವಿಶ್ವಾಸವನ್ನು ಕಂಡು ಅವನಿಗೆ, “ಮಗನೇ, ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದು ಹೇಳಿದರು.</verse>
				<verse number="21">ಆಗ ಫರಿಸಾಯರೂ ನಿಯಮ ಬೋಧಕರೂ, “ದೇವದೂಷಣೆಯನ್ನು ಮಾಡುವುದಕ್ಕೆ ಈತನು ಯಾರು? ದೇವರೊಬ್ಬನೇ ಹೊರತು ಪಾಪಗಳನ್ನು ಕ್ಷಮಿಸುವವರು ಯಾರು?” ಎಂದು ತಮ್ಮಲ್ಲಿ ಮಾತನಾಡಲಾರಂಭಿಸಿದರು.</verse>
				<verse number="22">ಯೇಸು ಅವರ ಆಲೋಚನೆಗಳನ್ನು ತಿಳಿದು, “ನೀವು ನಿಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಿರುವುದೇನು?</verse>
				<verse number="23">ಯಾವುದು ಸುಲಭ? ‘ನಿನ್ನ ಪಾಪಗಳು ಕ್ಷಮಿಸಲಾಗಿವೆ,’ ಎನ್ನುವುದೋ ಅಥವಾ ‘ಎದ್ದು ನಡೆ,’ ಎನ್ನುವುದೋ?</verse>
				<verse number="24">ಆದರೆ ಮನುಷ್ಯಪುತ್ರನಾದ ನನಗೆ ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸುವುದಕ್ಕೆ ಅಧಿಕಾರವುಂಟೆಂದು ನೀವು ತಿಳಿಯಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.</verse>
				<verse number="25">ಕೂಡಲೇ ಅವನು ಅವರ ಮುಂದೆ ಎದ್ದು ತಾನು ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು, ದೇವರನ್ನು ಸ್ತುತಿಸುತ್ತಾ ತನ್ನ ಮನೆಗೆ ಹೊರಟುಹೋದನು.</verse>
				<verse number="26">ಅಲ್ಲಿದ್ದವರೆಲ್ಲರೂ ವಿಸ್ಮಯಗೊಂಡು ದೇವರನ್ನು ಸ್ತುತಿಸಿದರು. ಅವರು ಭಯಭಕ್ತಿಯಿಂದ ಕೂಡಿದವರಾಗಿ, “ನಾವು ಈ ದಿನ ಅಪೂರ್ವವಾದ ಕಾರ್ಯಗಳನ್ನು ಕಂಡೆವು,” ಎಂದರು.</verse>
				<verse number="27">ಇವುಗಳಾದ ಮೇಲೆ, ಯೇಸು ಹೊರಟುಹೋಗಿ ತೆರಿಗೆಯ ಕಛೇರಿಯಲ್ಲಿ ಕುಳಿತುಕೊಂಡಿದ್ದ ಲೇವಿ ಎಂಬ ಹೆಸರುಳ್ಳ ಒಬ್ಬ ಸುಂಕದವನನ್ನು ಕಂಡು ಅವನಿಗೆ, “ನನ್ನನ್ನು ಹಿಂಬಾಲಿಸು,” ಎಂದರು.</verse>
				<verse number="28">ಲೇವಿ ಎಲ್ಲವನ್ನು ಬಿಟ್ಟು ಎದ್ದು ಯೇಸುವನ್ನು ಹಿಂಬಾಲಿಸಿದನು.</verse>
				<verse number="29">ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಯೇಸುವಿಗೆ ದೊಡ್ಡ ಔತಣವನ್ನು ಮಾಡಿಸಲು, ಬಹಳ ಜನ ಸುಂಕದವರು ಮತ್ತು ಇತರರು ಯೇಸುವಿನೊಂದಿಗೆ ಊಟಮಾಡುತ್ತಿದ್ದರು.</verse>
				<verse number="30">ಆದರೆ ಫರಿಸಾಯರೂ ಅವರ ಗುಂಪಿಗೆ ಸೇರಿದ ನಿಯಮ ಬೋಧಕರೂ ಯೇಸುವಿನ ವಿರೋಧವಾಗಿ ಗೊಣಗಾಡುತ್ತಾ ಶಿಷ್ಯರಿಗೆ, “ನೀವು ಏಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ?” ಎಂದು ಕೇಳಿದರು.</verse>
				<verse number="31">ಅದಕ್ಕೆ ಯೇಸು, “ಆರೋಗ್ಯವಂತರಿಗೆ ವೈದ್ಯನು ಅವಶ್ಯವಿಲ್ಲ, ರೋಗಿಗಳಿಗೆ ವೈದ್ಯನು ಅವಶ್ಯ.</verse>
				<verse number="32">ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನೇ ದೇವರ ಕಡೆಗೆ ತಿರುಗಿಕೊಳ್ಳುವಂತೆ ಕರೆಯಲು ಬಂದೆನು,” ಎಂದರು.</verse>
				<verse number="33">ಕೆಲವರು ಯೇಸುವಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸವಿದ್ದು ಪ್ರಾರ್ಥನೆಗಳನ್ನು ಮಾಡುತ್ತಾರೆ, ಅದರಂತೆಯೇ ಫರಿಸಾಯರ ಶಿಷ್ಯರೂ ಮಾಡುತ್ತಾರೆ, ಆದರೆ ನಿಮ್ಮ ಶಿಷ್ಯರು ಏಕೆ ತಿಂದು ಕುಡಿಯುತ್ತಾರೆ?” ಎಂದು ಕೇಳಿದರು.</verse>
				<verse number="34">ಅದಕ್ಕೆ ಯೇಸು, “ಮದುಮಗನು ಮದುವೆ ಅತಿಥಿಗಳ ಸಂಗಡವಿರುವಾಗ ಅವರನ್ನು ಉಪವಾಸವಿರಿಸಲಾದೀತೆ?</verse>
				<verse number="35">ಆದರೆ ಮದುಮಗನನ್ನು ಅವರಿಂದ ತೆಗೆದುಕೊಂಡು ಹೋಗುವ ದಿವಸಗಳು ಬರುವುವು; ಆಗ ಆ ದಿವಸಗಳಲ್ಲಿ ಅವರು ಉಪವಾಸ ಮಾಡುವರು,” ಎಂದು ಹೇಳಿದರು.</verse>
				<verse number="36">ಯೇಸು ಅವರಿಗೆ ಒಂದು ಸಾಮ್ಯವನ್ನು ಹೇಳಿದರು: “ಹಳೆಯ ವಸ್ತ್ರಕ್ಕೆ ಹೊಸ ಬಟ್ಟೆಯ ತುಂಡನ್ನು ಹರಿದು ತೇಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸದು ಹರಿದು ಹೋಗುವುದು. ಹೊಸದರಿಂದ ಕತ್ತರಿಸಿದ ತುಂಡು ಹಳೆಯದರೊಂದಿಗೆ ಹೊಂದಿಕೆಯಾಗುವುದಿಲ್ಲ.</verse>
				<verse number="37">ಯಾರೂ ಹೊಸ ದ್ರಾಕ್ಷಾರಸವನ್ನು ಹಳೆಯ ಚರ್ಮದ ಚೀಲಗಳಲ್ಲಿ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಚರ್ಮದ ಚೀಲಗಳು ಒಡೆದು, ದ್ರಾಕ್ಷಾರಸವು ಚೆಲ್ಲಿಹೋಗಿ ಚರ್ಮದ ಚೀಲಗಳು ಹಾಳಾಗುತ್ತವೆ.</verse>
				<verse number="38">ಆದರೆ, ಹೊಸ ದ್ರಾಕ್ಷಾರಸವನ್ನು ಹೊಸ ಚರ್ಮದ ಚೀಲಗಳಲ್ಲಿ ಹಾಕಿಡಬೇಕು.</verse>
				<verse number="39">ಯಾರೂ ಹಳೆಯ ದ್ರಾಕ್ಷಾರಸವನ್ನು ಕುಡಿದ ಮೇಲೆ ಹೊಸದನ್ನು ಅಪೇಕ್ಷಿಸುವುದಿಲ್ಲ, ಏಕೆಂದರೆ ಅವರು, ‘ಹಳೆಯದೇ ಉತ್ತಮವಾದದ್ದು,’ ಎನ್ನುವರು,” ಎಂದರು.</verse>
			</chapter>
			<chapter number="6">
				<verse number="1">ಒಂದು ಯೆಹೂದ್ಯರ ಸಬ್ಬತ್ ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ದಾಟಿಹೋಗುತ್ತಿದ್ದರು. ಆಗ ಅವರ ಶಿಷ್ಯರು ತೆನೆಗಳನ್ನು ಕಿತ್ತು ತಮ್ಮ ಕೈಗಳಲ್ಲಿ ಹೊಸಕಿಕೊಂಡು ಅದರ ಕಾಳುಗಳನ್ನು ತಿನ್ನುತ್ತಿದ್ದರು.</verse>
				<verse number="2">ಫರಿಸಾಯರಲ್ಲಿ ಕೆಲವರು ಅವರಿಗೆ, “ಸಬ್ಬತ್ ದಿನದಲ್ಲಿ ಮೋಶೆಯ ನಿಯಮಕ್ಕೆ ವಿರುದ್ಧವಾಗಿರುವದನ್ನು ನೀವು ಏಕೆ ಮಾಡುತ್ತೀರಿ?” ಎಂದರು.</verse>
				<verse number="3">ಅದಕ್ಕೆ ಯೇಸು, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಅವನು ಏನು ಮಾಡಿದನೆಂದು ನೀವು ಓದಲಿಲ್ಲವೇ?</verse>
				<verse number="4">ಅವನು ದೇವರ ಆಲಯದೊಳಗೆ ಹೋಗಿ, ಯಾಜಕರ ಹೊರತು ಬೇರೆಯವರು ತಿನ್ನುವುದಕ್ಕೆ ಮೋಶೆ ನಿಯಮಕ್ಕೆ ಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತೆಗೆದುಕೊಂಡು ತಿಂದು, ತನ್ನ ಸಂಗಡಿಗರಿಗೂ ಕೊಟ್ಟನಲ್ಲವೇ” ಎಂದರು.</verse>
				<verse number="5">ಯೇಸು ಅವರಿಗೆ, “ಮನುಷ್ಯಪುತ್ರನಾದ ನಾನು ಸಬ್ಬತ್ತಿಗೂ ಕರ್ತ ದೇವರಾಗಿದ್ದೇನೆ,” ಎಂದರು.</verse>
				<verse number="6">ಇನ್ನೊಂದು ಸಬ್ಬತ್ ದಿನದಲ್ಲಿ ಯೇಸು ಸಭಾಮಂದಿರದೊಳಕ್ಕೆ ಪ್ರವೇಶಿಸಿ ಬೋಧಿಸಿದರು, ಅಲ್ಲಿ ಬಲಗೈ ಬತ್ತಿದ ಒಬ್ಬ ಮನುಷ್ಯನಿದ್ದನು.</verse>
				<verse number="7">ಆಗ ಫರಿಸಾಯರೂ ನಿಯಮ ಬೋಧಕರೂ ಯೇಸುವಿಗೆ ವಿರೋಧವಾಗಿ ತಪ್ಪು ಕಂಡು ಹಿಡಿಯಬೇಕೆಂದು, ಅವರು ಆ ಸಬ್ಬತ್ ದಿನದಲ್ಲಿ ಅವನನ್ನು ಯೇಸು ಗುಣಪಡಿಸುವರೋ ಏನೋ ಎಂದು ಗಮನಿಸಿ ನೋಡುತ್ತಿದ್ದರು.</verse>
				<verse number="8">ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದುಕೊಂಡು ಕೈಬತ್ತಿದವನಿಗೆ, “ನೀನು ಎದ್ದು ಬಂದು ನಡುವೆ ನಿಂತುಕೋ,” ಎಂದಾಗ ಅವನು ಎದ್ದು ನಿಂತುಕೊಂಡನು.</verse>
				<verse number="9">ಯೇಸು ಅವರಿಗೆ, “ನಾನು ನಿಮ್ಮನ್ನು ಕೇಳುತ್ತೇನೆ: ಸಬ್ಬತ್ ದಿನದಲ್ಲಿ ಒಳ್ಳೆಯದನ್ನು ಮಾಡುವುದು ಮೋಶೆಯ ನಿಯಮಕ್ಕೆ ಸಮ್ಮತವೋ ಕೆಟ್ಟದ್ದನ್ನು ಮಾಡುವುದೋ? ಪ್ರಾಣವನ್ನು ಉಳಿಸುವುದೋ ಅಳಿಸುವುದೋ?” ಎಂದರು.</verse>
				<verse number="10">ಯೇಸು ಸುತ್ತಲೂ ಇದ್ದವರನ್ನು ನೋಡಿ, ಆ ಮನುಷ್ಯನಿಗೆ, “ನಿನ್ನ ಕೈಚಾಚು,” ಎಂದರು. ಅವನು ಹಾಗೆಯೇ ಮಾಡಿದನು. ಆಗ ಅವನ ಕೈ ಸಂಪೂರ್ಣವಾಗಿ ಗುಣವಾಯಿತು.</verse>
				<verse number="11">ಆದರೆ ಫರಿಸಾಯರೂ ನಿಯಮ ಬೋಧಕರೂ ತುಂಬಾ ಕೋಪಗೊಂಡು ಯೇಸುವಿಗೆ ಏನಾದರೂ ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.</verse>
				<verse number="12">ಆ ದಿನಗಳಲ್ಲಿ ಯೇಸು ಪ್ರಾರ್ಥಿಸುವುದಕ್ಕಾಗಿ ಒಂದು ಬೆಟ್ಟಕ್ಕೆ ಹೋಗಿ, ರಾತ್ರಿಯೆಲ್ಲಾ ದೇವರನ್ನು ಪ್ರಾರ್ಥಿಸುವುದರಲ್ಲಿ ಕಳೆದರು.</verse>
				<verse number="13">ಬೆಳಗಾದ ಮೇಲೆ, ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ “ಅಪೊಸ್ತಲರು” ಎಂದು ಹೆಸರಿಟ್ಟರು.</verse>
				<verse number="14">ಅವರು ಯಾರೆಂದರೆ: ಪೇತ್ರನೆಂದು ಹೆಸರು ಹೊಂದಿದ ಸೀಮೋನ, ಅವನ ಸಹೋದರ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,</verse>
				<verse number="15">ಮತ್ತಾಯ, ತೋಮ, ಅಲ್ಫಾಯನ ಮಗ ಯಾಕೋಬ, ದೇಶಾಭಿಮಾನಿ ಎಂದು ಅನ್ನಿಸಿಕೊಂಡ ಸೀಮೋನ,</verse>
				<verse number="16">ಯಾಕೋಬನ ಮಗ ಯೂದ, ಮತ್ತು ದ್ರೋಹಿಯಾದ ಇಸ್ಕರಿಯೋತ ಯೂದ.</verse>
				<verse number="17">ಯೇಸು ಅವರೊಂದಿಗೆ ಕೆಳಗಿಳಿದು ಸಮತಟ್ಟಾದ ಭೂಮಿಯ ಮೇಲೆ ನಿಂತಿದ್ದಾಗ, ಅವರ ಶಿಷ್ಯರ ಗುಂಪು ಅಲ್ಲದೆ ಯೂದಾಯದಿಂದಲೂ ಯೆರೂಸಲೇಮಿನಿಂದಲೂ ಟೈರ್, ಸೀದೋನ್ ಪಟ್ಟಣಗಳಿರುವ ಸಮುದ್ರ ತೀರದಿಂದಲೂ</verse>
				<verse number="18">ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮ ರೋಗಗಳಿಂದ ಸ್ವಸ್ಥರಾಗುವುದಕ್ಕೂ ಜನರು ದೊಡ್ಡ ಸಮೂಹವಾಗಿ ಬಂದರು. ದುರಾತ್ಮಗಳಿಂದ ಪೀಡಿತರಾದವರೂ ಬಂದು ಸ್ವಸ್ಥರಾದರು,</verse>
				<verse number="19">ಆಗ ಸಮೂಹದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಪ್ರಯತ್ನಿಸಿದರು, ಏಕೆಂದರೆ ಅವರಿಂದ ಶಕ್ತಿಯು ಹೊರಟು ಅವರೆಲ್ಲರನ್ನು ಸ್ವಸ್ಥಮಾಡುತ್ತಿತ್ತು.</verse>
				<verse number="20">ಯೇಸು ತಮ್ಮ ಶಿಷ್ಯರನ್ನು ನೋಡಿ, ಹೇಳಿದ್ದೇನೆಂದರೆ: “ಬಡವರಾದ ನೀವು ಧನ್ಯರು, ದೇವರ ರಾಜ್ಯವು ನಿಮ್ಮದೇ.</verse>
				<verse number="21">ಈಗ ಹಸಿದವರಾದ ನೀವು ಧನ್ಯರು, ನೀವು ತೃಪ್ತಿಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು, ನೀವು ನಗುವಿರಿ.</verse>
				<verse number="22">ಮನುಷ್ಯಪುತ್ರನಾದ ನನ್ನ ನಿಮಿತ್ತ ಜನರು ನಿಮ್ಮನ್ನು ದ್ವೇಷಮಾಡಿ, ನಿಮ್ಮನ್ನು ಬಹಿಷ್ಕರಿಸಿ, ನಿಂದಿಸಿ, ನಿಮ್ಮ ಹೆಸರನ್ನು ಕೆಟ್ಟದೆಂದು ತಿರಸ್ಕರಿಸಿದರೆ ನೀವು ಧನ್ಯರು.</verse>
				<verse number="23">“ಆ ದಿನದಲ್ಲಿ ನೀವು ಸಂತೋಷಪಡಿರಿ, ಉಲ್ಲಾಸದಿಂದ ಕುಣಿದಾಡಿರಿ. ಇಗೋ, ಪರಲೋಕದಲ್ಲಿ ನಿಮಗೆ ಮಹಾ ಪ್ರತಿಫಲ ಸಿಕ್ಕುವುದು. ಈ ಜನರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು.</verse>
				<verse number="24">“ಆದರೆ ಐಶ್ವರ್ಯವಂತರೇ, ನಿಮಗೆ ಕಷ್ಟ, ಏಕೆಂದರೆ ನೀವು ನಿಮ್ಮ ನೆಮ್ಮದಿಯನ್ನು ಹೊಂದಿದ್ದೀರಿ.</verse>
				<verse number="25">ಈಗ ತಿಂದು ತೃಪ್ತಿಯಿಂದಿರುವವರೇ, ನಿಮಗೆ ಕಷ್ಟ, ಏಕೆಂದರೆ ನಿಮಗೆ ಹಸಿವೆಯಾಗುವುದು. ಈಗ ನಗುವವರೇ ನಿಮಗೆ ಕಷ್ಟ, ಏಕೆಂದರೆ ನೀವು ದುಃಖಿಸಿ ಗೋಳಾಡುವಿರಿ.</verse>
				<verse number="26">ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೆಯದಾಗಿ ಮಾತನಾಡಿದರೆ ನಿಮಗೆ ಕಷ್ಟ, ಇವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.</verse>
				<verse number="27">“ನನ್ನನ್ನು ಆಲಿಸುತ್ತಿರುವವರೆ ನನ್ನ ಮಾತನ್ನು ಕೇಳಿರಿ: ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ದ್ವೇಷಮಾಡುವವರಿಗೆ ಒಳ್ಳೆಯದನ್ನು ಮಾಡಿರಿ,</verse>
				<verse number="28">ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ಅವಮಾನ ಪಡಿಸುವವರಿಗೋಸ್ಕರ ಪ್ರಾರ್ಥಿಸಿರಿ.</verse>
				<verse number="29">ಒಂದು ಕೆನ್ನೆಯ ಮೇಲೆ ನಿನ್ನನ್ನು ಹೊಡೆಯುವವನಿಗೆ ಮತ್ತೊಂದನ್ನು ಸಹ ತೋರಿಸು. ನಿನ್ನ ಮೇಲಂಗಿಯನ್ನು ತೆಗೆದುಕೊಳ್ಳುವವನಿಗೆ, ನಿನ್ನ ಒಳ ಅಂಗಿಯನ್ನು ಕೊಟ್ಟುಬಿಡು.</verse>
				<verse number="30">ನಿನ್ನಿಂದ ಕೇಳುವ ಪ್ರತಿಯೊಬ್ಬರಿಗೂ ಕೊಡು, ನಿನ್ನ ಸೊತ್ತನ್ನು ತೆಗೆದುಕೊಳ್ಳುವವನಿಂದ, ಅವುಗಳನ್ನು ತಿರುಗಿ ಕೇಳಬೇಡ.</verse>
				<verse number="31">ಇತರರು ನಿಮಗೆ ಏನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿರಿ.</verse>
				<verse number="32">“ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ, ನಿಮಗೇನು ದೊಡ್ಡಸ್ತಿಕೆ ಬಂದೀತು? ಪಾಪಿಗಳು ಸಹ ತಮ್ಮನ್ನು ಪ್ರೀತಿಸುವವರನ್ನೇ ಪ್ರೀತಿಸುತ್ತಾರೆ.</verse>
				<verse number="33">ನಿಮಗೆ ಒಳ್ಳೆಯದನ್ನು ಮಾಡುವವರಿಗೆ ನೀವು ಒಳ್ಳೆಯದನ್ನು ಮಾಡಿದರೆ ವಿಶೇಷವೇನು? ಪಾಪಿಗಳು ಸಹ ಹಾಗೆಯೇ ಮಾಡುತ್ತಾರಲ್ಲಾ.</verse>
				<verse number="34">ಯಾರಿಂದ ತಿರುಗಿ ಪಡೆದುಕೊಳ್ಳಬೇಕೆಂದು ನಿರೀಕ್ಷಿಸುತ್ತೀರೋ ಅಂಥವರಿಗೆ ಸಾಲಕೊಟ್ಟರೆ, ಅದರಿಂದ ನಿಮಗೆ ವಿಶೇಷವೇನು? ಪಾಪಿಗಳು ಸಹ ಹಾಗೆಯೇ ತಾವು ಕೊಟ್ಟದ್ದನ್ನು ತಿರುಗಿ ಪಡೆಯುವಂತೆ, ಪಾಪಿಗಳಿಗೆ ಸಾಲ ಕೊಡುತ್ತಾರೆ.</verse>
				<verse number="35">ಆದರೆ ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಅವರಿಗೆ ಒಳ್ಳೆಯದನ್ನು ಮಾಡಿರಿ. ಏನನ್ನೂ ತಿರುಗಿ ನಿರೀಕ್ಷಿಸದೆ ಸಾಲ ಕೊಡಿರಿ, ಆಗ ನಿಮ್ಮ ಪ್ರತಿಫಲ ದೊಡ್ಡದಾಗಿರುವುದು. ನೀವು ಮಹೋನ್ನತ ದೇವರ ಮಕ್ಕಳಾಗಿರುವಿರಿ, ಅವರು ಕೃತಜ್ಞತೆಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವರಾಗಿದ್ದಾರೆ.</verse>
				<verse number="36">ನಿಮ್ಮ ತಂದೆಯು ಕರುಣೆಯುಳ್ಳವರಾಗಿರುವ ಪ್ರಕಾರ, ನೀವೂ ಕರುಣೆಯುಳ್ಳವರಾಗಿರಿ.</verse>
				<verse number="37">“ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ. ಇತರರನ್ನು ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ. ಕ್ಷಮಿಸಿರಿ, ಆಗ ನಿಮ್ಮನ್ನೂ ಕ್ಷಮಿಸುವರು.</verse>
				<verse number="38">ಕೊಡಿರಿ, ಆಗ ನಿಮಗೂ ಕೊಡುವರು. ಒಳ್ಳೆಯ ಅಳತೆಯಲ್ಲಿ ಒತ್ತಿ, ಕುಲುಕಿ, ಚೆಲ್ಲುವಂತೆ ಮನುಷ್ಯರು ನಿಮ್ಮ ಮಡಿಲಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು,” ಎಂದರು.</verse>
				<verse number="39">ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದು: “ಕುರುಡನು ಕುರುಡನಿಗೆ ದಾರಿತೋರಿಸಬಲ್ಲನೋ? ಅವರಿಬ್ಬರೂ ಹಳ್ಳಕ್ಕೆ ಬೀಳುವರಲ್ಲವೇ?</verse>
				<verse number="40">ತನ್ನ ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ, ಆದರೆ ಪರಿಪೂರ್ಣನಾಗಿರುವ ಪ್ರತಿಯೊಬ್ಬನು ತನ್ನ ಗುರುವಿನಂತೆ ಇರುವನಷ್ಟೇ.</verse>
				<verse number="41">“ನೀನು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೋಡದೆ, ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ನೋಡುವುದೇಕೆ?</verse>
				<verse number="42">ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ನೀನು ತೆಗೆಯದೆ ನಿನ್ನ ಸಹೋದರನಿಗೆ, ‘ಸಹೋದರನೇ, ನಿನ್ನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯುತ್ತೇನೆ,’ ಎಂದು ನೀನು ಹೇಳುವುದು ಹೇಗೆ? ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ಮರದ ದಿಮ್ಮಿಯನ್ನು ತೆಗೆದುಹಾಕು, ಆಮೇಲೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಮರದ ಚೂರನ್ನು ತೆಗೆಯಲು ನಿನ್ನ ಕಣ್ಣು ಸ್ಪಷ್ಟವಾಗಿ ಕಾಣುವುದು.</verse>
				<verse number="43">“ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ, ಇಲ್ಲವೆ ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.</verse>
				<verse number="44">ಪ್ರತಿಯೊಂದು ಮರವು ಅದರ ಫಲದಿಂದಲೇ ಗೊತ್ತಾಗುವುದು. ಏಕೆಂದರೆ ಮನುಷ್ಯರು ಮುಳ್ಳುಗಿಡಗಳಲ್ಲಿ ಅಂಜೂರಗಳನ್ನು ಕೀಳುವುದಿಲ್ಲ, ಮುಳ್ಳು ಕಳ್ಳಿಯಲ್ಲಿ ದ್ರಾಕ್ಷಿಗಳನ್ನು ಕೊಯ್ಯುವುದಿಲ್ಲ.</verse>
				<verse number="45">ಒಳ್ಳೆಯವನು ತನ್ನ ಹೃದಯದ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಆದರೆ ಕೆಟ್ಟವನು ತನ್ನ ಹೃದಯದ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.</verse>
				<verse number="46">“ನನ್ನನ್ನು ನೀವು, ‘ಕರ್ತದೇವರೇ, ಕರ್ತದೇವರೇ,’ ಎಂದು ಕರೆದು ನಾನು ಹೇಳುವವುಗಳನ್ನು ನೀವು ಮಾಡದೆ ಇರುವುದು ಏಕೆ?</verse>
				<verse number="47">ಯಾರು ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿ ಅದರಂತೆ ನಡೆಯುತ್ತಾರೋ, ಅಂಥವರು ಯಾರಿಗೆ ಸಮಾನರಾಗಿದ್ದಾರೆಂದು ನಾನು ನಿಮಗೆ ತೋರಿಸುತ್ತೇನೆ.</verse>
				<verse number="48">ಅವರು ಆಳವಾಗಿ ಅಗೆದು ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ, ಮನೆ ಕಟ್ಟಿದವರಿಗೆ ಸಮಾನರಾಗಿದ್ದಾರೆ. ಪ್ರಳಯವು ಎದ್ದು, ಪ್ರವಾಹವು ಆ ಮನೆಗೆ ರಭಸವಾಗಿ ಬಡಿದರೂ ಅದನ್ನು ಕದಲಿಸಲಿಕ್ಕಾಗದೆ ಹೋಯಿತು, ಏಕೆಂದರೆ ಅದು ಬಲವಾಗಿ ಕಟ್ಟಲಾಗಿತ್ತು.</verse>
				<verse number="49">ಆದರೆ ನನ್ನ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದೆ ಇರುವವರು, ಅಸ್ತಿವಾರವಿಲ್ಲದೆ ಮರಳಿನ ಮೇಲೆ ಮನೆ ಕಟ್ಟಿದವರಿಗೆ ಹೋಲಿಕೆಯಾಗಿದ್ದಾರೆ. ಪ್ರವಾಹವು ಆ ಮನೆಗೆ ಅಪ್ಪಳಿಸಿದಾಗ, ಕೂಡಲೇ ಅದು ಕುಸಿದು ಬಿತ್ತು. ಹೀಗೆ ಆ ಮನೆಯು ಸರ್ವನಾಶವಾಯಿತು.”</verse>
			</chapter>
			<chapter number="7">
				<verse number="1">ತಮ್ಮ ಎಲ್ಲಾ ಮಾತುಗಳನ್ನು ಜನರೆಲ್ಲರೂ ಕೇಳುವಂತೆ ಹೇಳಿ ಮುಗಿಸಿದ ಮೇಲೆ, ಯೇಸು ಕಪೆರ್ನೌಮಿಗೆ ಪ್ರವೇಶಿಸಿದರು.</verse>
				<verse number="2">ಆಗ ಒಬ್ಬ ಶತಾಧಿಪತಿಗೆ, ಪ್ರಿಯನಾಗಿದ್ದ ಸೇವಕ, ಅಸ್ವಸ್ಥನಾಗಿ ಸಾಯುವುದರಲ್ಲಿದ್ದನು.</verse>
				<verse number="3">ಅವನು ಯೇಸುವಿನ ವಿಷಯ ಕೇಳಿದಾಗ, ಬಂದು ತನ್ನ ಸೇವಕನನ್ನು ಗುಣಮಾಡಬೇಕೆಂದು ಬೇಡಿಕೊಳ್ಳುವಂತೆ ಯೆಹೂದ್ಯರ ಹಿರಿಯರನ್ನು ಅವರ ಬಳಿಗೆ ಕಳುಹಿಸಿದನು.</verse>
				<verse number="4">ಅವರು ಯೇಸುವಿನ ಬಳಿಗೆ ಬಂದು ಅವರಿಗೆ, “ನೀವು ಇದನ್ನು ಮಾಡುವುದಕ್ಕೆ ಅವನು ಯೋಗ್ಯನು,</verse>
				<verse number="5">ಏಕೆಂದರೆ ಅವನು ನಮ್ಮ ಜನಾಂಗವನ್ನು ಪ್ರೀತಿಸುವುದಲ್ಲದೆ ನಮಗಾಗಿ ಒಂದು ಸಭಾಮಂದಿರವನ್ನು ಕಟ್ಟಿಸಿದ್ದಾನೆ,” ಎಂದು ಆಸಕ್ತಿಯಿಂದ ಬೇಡಿಕೊಂಡರು.</verse>
				<verse number="6">ಯೇಸು ಅವರೊಂದಿಗೆ ಹೋದರು. ಅವರು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗಲೇ ಶತಾಧಿಪತಿಯು ಸ್ನೇಹಿತರನ್ನು ಯೇಸುವಿನ ಬಳಿಗೆ ಕಳುಹಿಸಿ, “ಕರ್ತದೇವರೇ, ನಿಮ್ಮನ್ನು ತೊಂದರೆ ಪಡಿಸಿಕೊಳ್ಳಬೇಡಿರಿ, ನನ್ನ ಮನೆಯೊಳಗೆ ನೀವು ಬರುವಷ್ಟು ಯೋಗ್ಯತೆ ನನಗಿಲ್ಲ.</verse>
				<verse number="7">ನಾನು ನಿಮ್ಮ ಬಳಿಗೆ ಬರುವುದಕ್ಕೆ ಯೋಗ್ಯನೆಂದು ಎಣಿಸಿಕೊಳ್ಳಲಿಲ್ಲ. ಆದರೆ ನೀವು ಒಂದು ಮಾತು ಹೇಳಿರಿ, ಆಗ ನನ್ನ ಸೇವಕ ಗುಣಹೊಂದುವನು.</verse>
				<verse number="8">ನಾನು ಸಹ ಮತ್ತೊಬ್ಬ ಅಧಿಕಾರಿಯ ಕೈಕೆಳಗಿರುವವನು, ನನ್ನ ಅಧೀನದಲ್ಲಿಯೂ ಸೈನಿಕರಿದ್ದಾರೆ ಮತ್ತು ನಾನು ಒಬ್ಬನಿಗೆ, ‘ಹೋಗು,’ ಎಂದರೆ ಅವನು ಹೋಗುತ್ತಾನೆ, ಮತ್ತೊಬ್ಬನಿಗೆ ‘ಬಾ,’ ಎಂದರೆ ಅವನು ಬರುತ್ತಾನೆ. ನನ್ನ ಸೇವಕನಿಗೆ, ‘ಇದನ್ನು ಮಾಡು,’ ಎಂದರೆ ಅವನು ಮಾಡುತ್ತಾನೆ,” ಎಂದು ಹೇಳಿ ಕಳುಹಿಸಿದನು.</verse>
				<verse number="9">ಯೇಸು ಅವನ ಈ ಮಾತುಗಳನ್ನು ಕೇಳಿದಾಗ, ಆಶ್ಚರ್ಯಪಟ್ಟು ತಿರುಗಿಕೊಂಡು ತಮ್ಮನ್ನು ಹಿಂಬಾಲಿಸುತ್ತಿದ್ದ ಗುಂಪಿಗೆ, “ನಾನು ನಿಮಗೆ ಹೇಳುವುದೇನೆಂದರೆ, ಇಂಥ ಮಹಾ ನಂಬಿಕೆಯನ್ನು ನಾನು ಇಸ್ರಾಯೇಲ್ ಜನರಲ್ಲಿಯೂ ಸಹ ಕಾಣಲಿಲ್ಲ,” ಎಂದರು.</verse>
				<verse number="10">ಶತಾಧಿಪತಿಯ ಕಡೆಯಿಂದ ಬಂದವರು ಮನೆಗೆ ಹಿಂದಿರುಗಿದಾಗ ಅಸ್ವಸ್ಥನಾಗಿದ್ದ ಆ ಸೇವಕ ಸ್ವಸ್ಥನಾಗಿರುವುದನ್ನು ಕಂಡರು.</verse>
				<verse number="11">ಇದಾದ ಮೇಲೆ, ಯೇಸು ನಾಯಿನ್ ಎಂಬ ಪಟ್ಟಣಕ್ಕೆ ಹೋದರು. ಆಗ ಅವರ ಶಿಷ್ಯರೂ ಜನರ ದೊಡ್ಡ ಗುಂಪೂ ಅವರ ಸಂಗಡ ಹೋದರು.</verse>
				<verse number="12">ಯೇಸು ಪಟ್ಟಣ ದ್ವಾರದ ಸಮೀಪಕ್ಕೆ ಬಂದಾಗ, ಸತ್ತು ಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೋಗುತ್ತಿದ್ದರು, ಅವನು ತನ್ನ ತಾಯಿಗೆ ಒಬ್ಬನೇ ಮಗನು, ಆಕೆಯು ವಿಧವೆಯಾಗಿದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.</verse>
				<verse number="13">ಕರ್ತದೇವರು ಆಕೆಯನ್ನು ಕಂಡು, ಆಕೆಯ ಮೇಲೆ ಕನಿಕರಪಟ್ಟು, “ಅಳಬೇಡ” ಎಂದರು.</verse>
				<verse number="14">ಅನಂತರ ಯೇಸು ಬಂದು ಶವದ ಚಟ್ಟವನ್ನು ಮುಟ್ಟಿದಾಗ, ಅದನ್ನು ಹೊತ್ತುಕೊಂಡಿದ್ದವರು ಹಾಗೆಯೇ ನಿಂತರು. ಆಗ ಯೇಸು, “ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂದರು.</verse>
				<verse number="15">ಆಗ ಸತ್ತವನು ಎದ್ದು ಕುಳಿತುಕೊಂಡು ಮಾತನಾಡಲಾರಂಭಿಸಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದರು.</verse>
				<verse number="16">ಆಗ ಅವರೆಲ್ಲರೂ ಭಯಭಕ್ತಿಯಿಂದ ಕೂಡಿದವರಾಗಿ, “ನಮ್ಮ ಮಧ್ಯದಲ್ಲಿ ಒಬ್ಬ ಮಹಾ ಪ್ರವಾದಿಯು ಎದ್ದಿದ್ದಾರೆ; ದೇವರು ತಮ್ಮ ಜನರಿಗೆ ಸಹಾಯಮಾಡಲು ಬಂದಿದ್ದಾರೆ,” ಎಂದು ದೇವರನ್ನು ಮಹಿಮೆಪಡಿಸುತ್ತಾ ಹೇಳಿದರು.</verse>
				<verse number="17">ಯೇಸುವಿನ ವಿಷಯವಾದ ಈ ಸುದ್ದಿಯು ಯೂದಾಯದ ಎಲ್ಲಾ ಪ್ರಾಂತಕ್ಕೂ, ಸುತ್ತಲಿನ ಎಲ್ಲಾ ಪ್ರಾಂತಕ್ಕೂ ಹರಡಿತು.</verse>
				<verse number="18">ಯೋಹಾನನ ಶಿಷ್ಯರು ಈ ಎಲ್ಲಾ ವಿಷಯಗಳನ್ನು ಅವನಿಗೆ ತಿಳಿಯಪಡಿಸಿದರು,</verse>
				<verse number="19">ಆಗ ಯೋಹಾನನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದ ಕ್ರಿಸ್ತನು ನೀನೋ ಇಲ್ಲವೇ ನಾವು ಇನ್ನೊಬ್ಬನಿಗಾಗಿ ಎದುರು ನೋಡಬೇಕೋ?” ಎಂದು ಕರ್ತದೇವರನ್ನು ಕೇಳಲು ಅವರ ಬಳಿಗೆ ಕಳುಹಿಸಿದನು.</verse>
				<verse number="20">ಅವರು ಯೇಸುವಿನ ಬಳಿಗೆ ಬಂದು, “ ‘ಬರಬೇಕಾದವರು ನೀವೋ? ಇಲ್ಲವೆ ನಾವು ಬೇರೊಬ್ಬರಿಗಾಗಿ ಎದುರು ನೋಡಬೇಕೋ?’ ಎಂದು ಕೇಳುವುದಕ್ಕಾಗಿ ಸ್ನಾನಿಕ ಯೋಹಾನನು ನಮ್ಮನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ,” ಎಂದು ಹೇಳಿದರು.</verse>
				<verse number="21">ಅದೇ ಸಮಯದಲ್ಲಿ ರೋಗಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಯೇಸು ಗುಣಪಡಿಸುತ್ತಿದ್ದರು, ಕುರುಡರಾದ ಅನೇಕರಿಗೆ ದೃಷ್ಟಿ ನೀಡುತ್ತಿದ್ದರು.</verse>
				<verse number="22">ತರುವಾಯ ಯೇಸು ಅವರಿಗೆ, “ನೀವು ಕಂಡು ಕೇಳಿದವುಗಳನ್ನು ಹೋಗಿ ಯೋಹಾನನಿಗೆ ತಿಳಿಸಿರಿ: ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.</verse>
				<verse number="23">ನನ್ನ ವಿಷಯದಲ್ಲಿ ವಿಶ್ವಾಸ ಕಳೆದುಕೊಳ್ಳದವನೇ ಧನ್ಯನು,” ಎಂದರು.</verse>
				<verse number="24">ಯೋಹಾನನ ಶಿಷ್ಯರು ಹೊರಟುಹೋದ ಮೇಲೆ, ಯೇಸು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ, “ನೀವು ಯಾವುದನ್ನು ಕಾಣುವುದಕ್ಕಾಗಿ ಅರಣ್ಯಕ್ಕೆ ಹೋದಿರಿ? ಗಾಳಿಗೆ ಓಲಾಡುವ ದಂಟನ್ನೋ?</verse>
				<verse number="25">ಇಲ್ಲವಾದರೆ, ನೀವು ಏನನ್ನು ಕಾಣುವುದಕ್ಕಾಗಿ ಹೋದಿರಿ? ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿಕೊಂಡು ಸುಖವಾಗಿ ಜೀವಿಸುವವರು ಅರಮನೆಗಳಲ್ಲಿ ಇರುತ್ತಾರೆ.</verse>
				<verse number="26">ಹಾಗಾದರೆ ಏನು ಕಾಣುವುದಕ್ಕಾಗಿ ಹೋದಿರಿ? ಒಬ್ಬ ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ, ಎಂದು ನಾನು ನಿಮಗೆ ಹೇಳುತ್ತೇನೆ.</verse>
				<verse number="27">ಯಾರ ವಿಷಯವಾಗಿ ಪವಿತ್ರ ವೇದದಲ್ಲಿ ಬರೆದಿತ್ತೋ ಅವನೇ ಇವನು: “ ‘ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ,’</verse>
				<verse number="28">ನಾನು ನಿಮಗೆ ಹೇಳುವುದೇನೆಂದರೆ, ಸ್ತ್ರೀಯರಲ್ಲಿ ಹುಟ್ಟಿದವರಲ್ಲಿ ಸ್ನಾನಿಕ ಯೋಹಾನನಿಗಿಂತ ದೊಡ್ಡವನು ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಂತ ಚಿಕ್ಕವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ,” ಎಂದರು.</verse>
				<verse number="29">ಯೋಹಾನನಿಂದ ಉಪದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಸಹ, ಯೇಸುವಿನ ಮಾತುಗಳನ್ನು ಕೇಳಿದಾಗ, ದೇವರ ಮಾರ್ಗವು ಸರಿಯಾಗಿದೆಯೆಂದು ಒಪ್ಪಿಕೊಂಡರು, ಏಕೆಂದರೆ ಅವರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರು.</verse>
				<verse number="30">ಆದರೆ ಫರಿಸಾಯರೂ ಮೋಶೆಯ ನಿಯಮ ಪಂಡಿತರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.</verse>
				<verse number="31">ಅನಂತರ ಯೇಸು ಜನರಿಗೆ, “ಈ ಕಾಲದ ಜನರನ್ನು, ನಾನು ಯಾವುದಕ್ಕೆ ಹೋಲಿಸಲಿ? ಅವರು ಯಾವುದಕ್ಕೆ ಹೋಲಿಕೆಯಾಗಿದ್ದಾರೆ?</verse>
				<verse number="32">ಅವರು ಸಂತೆಯಲ್ಲಿ ಕುಳಿತುಕೊಂಡು ಒಬ್ಬರನ್ನೊಬ್ಬರು ಕರೆಯುತ್ತಾ: “ ‘ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ, ನಾವು ನಿಮಗಾಗಿ ಶೋಕಗೀತೆ ಹಾಡಿದೆವು, ನೀವು ಅಳಲಿಲ್ಲ,’ ಎಂದು ಹೇಳುವ ಮಕ್ಕಳಿಗೆ ಹೋಲಿಕೆಯಾಗಿದ್ದಾರೆ.</verse>
				<verse number="33">“ಸ್ನಾನಿಕ ಯೋಹಾನನು ರೊಟ್ಟಿಯನ್ನು ತಿನ್ನದೆಯೂ ದ್ರಾಕ್ಷಾರಸವನ್ನು ಕುಡಿಯದೆಯೂ ಬಂದನು, ಅದಕ್ಕೆ ನೀವು, ‘ಅವನಿಗೆ ದೆವ್ವ ಹಿಡಿದಿದೆ,’ ಎನ್ನುತ್ತೀರಿ.</verse>
				<verse number="34">ಮನುಷ್ಯಪುತ್ರನಾದ ನಾನು ಅನ್ನಪಾನ ಸೇವಿಸುವವನಾಗಿ ಬಂದೆನು, ಆದರೆ ನೀವು, ‘ಇಗೋ, ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು,’ ಎನ್ನುತ್ತೀರಿ.</verse>
				<verse number="35">ಆದರೆ ಜ್ಞಾನವನ್ನು ಅನ್ವಯಿಸಿಕೊಳ್ಳುವಾಗಲೇ ಜ್ಞಾನದ ಗುಣಲಕ್ಷಣಗಳು ಸ್ಪಷ್ಟವಾಗಿರುವುದು,” ಎಂದರು.</verse>
				<verse number="36">ಆಗ ಫರಿಸಾಯರಲ್ಲಿ ಒಬ್ಬನು ಯೇಸು ತನ್ನೊಂದಿಗೆ ಊಟ ಮಾಡಬೇಕೆಂದು ಅಪೇಕ್ಷಿಸಿದನು, ಆಗ ಯೇಸು ಆ ಫರಿಸಾಯನ ಮನೆಯೊಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡರು.</verse>
				<verse number="37">ಆ ಪಟ್ಟಣದಲ್ಲಿದ್ದ ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕುಳಿತುಕೊಂಡಿದ್ದಾರೆಂದು ಒಬ್ಬ ಪಾಪಿ ಸ್ತ್ರೀಯು ತಿಳಿದು, ಸುಗಂಧ ತೈಲದ ಭರಣಿಯನ್ನು ತಂದು,</verse>
				<verse number="38">ಅವರ ಪಾದಗಳ ಬಳಿಯಲ್ಲಿ ನಿಂತು, ಅಳುತ್ತಾ ಅವರ ಪಾದಗಳನ್ನು ಕಣ್ಣೀರಿನಿಂದ ತೊಳೆಯಲಾರಂಭಿಸಿ, ತನ್ನ ತಲೆಕೂದಲಿನಿಂದ ಒರೆಸಿ, ಅವರ ಪಾದಗಳಿಗೆ ಮುದ್ದಿಟ್ಟು ಆ ತೈಲವನ್ನು ಹಚ್ಚಿದಳು.</verse>
				<verse number="39">ಆಗ ಯೇಸುವನ್ನು ಆಮಂತ್ರಿಸಿದ ಫರಿಸಾಯನು, ಅದನ್ನು ಕಂಡು ತನ್ನೊಳಗೆ, “ಈ ಮನುಷ್ಯ ಒಬ್ಬ ಪ್ರವಾದಿಯಾಗಿದ್ದರೆ, ತನ್ನನ್ನು ಮುಟ್ಟುತ್ತಿದ್ದವಳು ಯಾರು, ಎಂಥಾ ಹೆಂಗಸು ಎಂದು ತಿಳಿದುಕೊಳ್ಳುತ್ತಿದ್ದನು. ಅವಳು ಒಬ್ಬ ಪಾಪಿ,” ಎಂದು ಅಂದುಕೊಂಡನು.</verse>
				<verse number="40">ಆಗ ಯೇಸು ಅವನಿಗೆ, “ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ವಿಷಯವಿದೆ,” ಎಂದರು. ಸೀಮೋನನು ಯೇಸುವಿಗೆ, “ಗುರುವೇ, ಹೇಳಿ” ಎಂದನು.</verse>
				<verse number="41">ಆಗ ಯೇಸು, “ಸಾಲಕೊಡುವ ಒಬ್ಬನಿಗೆ ಇಬ್ಬರು ಸಾಲಗಾರರಿದ್ದರು, ಒಬ್ಬನು ಐದು ನೂರು ಬೆಳ್ಳಿ ನಾಣ್ಯಗಳನ್ನೂ, ಮತ್ತೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನೂ ಕೊಡಬೇಕಾಗಿತ್ತು.</verse>
				<verse number="42">ಆದರೆ ಅವರಿಬ್ಬರಿಗೂ ಸಾಲತೀರಿಸುವುದಕ್ಕೆ ಹಣ ಇರಲಿಲ್ಲ. ಅವನು ಅವರಿಬ್ಬರ ಸಾಲವನ್ನೂ ರದ್ದುಮಾಡಿಬಿಟ್ಟನು. ಆದ್ದರಿಂದ ಅವರಲ್ಲಿ ಯಾರು ಬಹಳವಾಗಿ ಅವನನ್ನು ಪ್ರೀತಿಸುವರು?” ಎಂದು ಕೇಳಿದರು.</verse>
				<verse number="43">ಅದಕ್ಕೆ ಸೀಮೋನನು ಉತ್ತರವಾಗಿ, “ಯಾರಿಗೆ ಅವನು ಹೆಚ್ಚಾಗಿ ರದ್ದು ಮಾಡಿದನೋ ಅವನೇ ಎಂದು ತೋರುತ್ತದೆ,” ಎಂದನು. ಆಗ ಯೇಸು ಅವನಿಗೆ, “ನೀನು ಸರಿಯಾಗಿ ತೀರ್ಪು ಮಾಡಿದೆ,” ಎಂದರು.</verse>
				<verse number="44">ತರುವಾಯ ಯೇಸು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನನಿಗೆ, “ಈ ಸ್ತ್ರೀಯನ್ನು ಕಂಡಿದ್ದೀಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ. ಇವಳಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತನ್ನ ತಲೆಕೂದಲಿನಿಂದ ಅವುಗಳನ್ನು ಒರೆಸಿದ್ದಾಳೆ.</verse>
				<verse number="45">ನೀನು ನನಗೆ ಮುದ್ದು ಕೊಡಲಿಲ್ಲ. ಆದರೆ ನಾನು ಒಳಗೆ ಬಂದಾಗಿನಿಂದ ಈ ಸ್ತ್ರೀಯು ನನ್ನ ಪಾದಗಳಿಗೆ ಮುದ್ದಿಡುವುದನ್ನು ಬಿಡಲಿಲ್ಲ.</verse>
				<verse number="46">ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ, ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿದ್ದಾಳೆ.</verse>
				<verse number="47">ಬಹಳವಾಗಿರುವ ಇವಳ ಪಾಪಗಳು ಕ್ಷಮಿಸಲಾಗಿವೆ. ಏಕೆಂದರೆ ಇವಳು ಬಹಳವಾಗಿ ಪ್ರೀತಿಸಿದಳು. ಆದರೆ ಕಡಿಮೆ ಕ್ಷಮೆ ಪಡೆದವನು ಕಡಿಮೆ ಪ್ರೀತಿಸುವನು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.</verse>
				<verse number="48">ಯೇಸು ಆಕೆಗೆ, “ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.</verse>
				<verse number="49">ಯೇಸುವಿನ ಸಂಗಡ ಊಟಕ್ಕೆ ಕುಳಿತವರು, “ಪಾಪಗಳನ್ನು ಸಹ ಕ್ಷಮಿಸುವುದಕ್ಕೆ ಈತನು ಯಾರು?” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳಲಾರಂಭಿಸಿದರು.</verse>
				<verse number="50">ಯೇಸು ಆ ಸ್ತ್ರೀಗೆ, “ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು,” ಎಂದರು.</verse>
			</chapter>
			<chapter number="8">
				<verse number="1">ಇದಾದ ಮೇಲೆ, ಯೇಸು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಹೋಗಿ, ದೇವರ ರಾಜ್ಯದ ವಿಷಯ ಪ್ರಚಾರ ಮಾಡುತ್ತಾ ಸುವಾರ್ತೆಯನ್ನು ಸಾರುತ್ತಾ ಇದ್ದರು. ಹನ್ನೆರಡು ಮಂದಿ ಶಿಷ್ಯರು ಅವರೊಂದಿಗೆ ಇದ್ದರು.</verse>
				<verse number="2">ಇದಲ್ಲದೆ ದುರಾತ್ಮಗಳಿಂದಲೂ ರೋಗಗಳಿಂದಲೂ ಬಿಡುಗಡೆ ಹೊಂದಿದ ಕೆಲವು ಸ್ತ್ರೀಯರು ಮತ್ತು ಏಳು ದೆವ್ವಗಳು ಬಿಟ್ಟುಹೋಗಿದ್ದ ಮಗ್ದಲಿನ ಎಂದು ಕರೆಯಲಾದ ಮರಿಯಳು,</verse>
				<verse number="3">ಹೆರೋದನ ಅರಮನೆಯ ಗೃಹ ನಿರ್ವಾಹಕನಾದ ಕೂಜನ ಪತ್ನಿ ಯೋಹಾನಳು, ಸುಸನ್ನಳು ಮತ್ತು ಬೇರೆ ಅನೇಕರು ತಮ್ಮ ಆಸ್ತಿಯಿಂದ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರಮಾಡುತ್ತಿದ್ದರು.</verse>
				<verse number="4">ಪ್ರತಿಯೊಂದು ಪಟ್ಟಣದಿಂದ ಬಹುಜನರು ಅವರ ಬಳಿಗೆ ಒಟ್ಟಾಗಿ ಸೇರಿ ಬರಲು ಯೇಸು ಒಂದು ಸಾಮ್ಯವನ್ನು ಅವರಿಗೆ ಹೇಳಿದರು.</verse>
				<verse number="5">“ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು. ಅವನು ಬಿತ್ತುತ್ತಿರುವಾಗ, ಕೆಲವು ಬೀಜಗಳು ದಾರಿಯ ಪಕ್ಕದಲ್ಲಿ ಬಿದ್ದವು; ಅವು ಕಾಲ್ತುಳಿತಕ್ಕೆ ಒಳಗಾದವು, ಆಕಾಶದ ಪಕ್ಷಿಗಳು ಅವುಗಳನ್ನು ಹೆಕ್ಕಿ ತಿಂದವು.</verse>
				<verse number="6">ಇದಲ್ಲದೆ ಕೆಲವು ಬೀಜಗಳು ಕಲ್ಲುಭೂಮಿಯ ಮೇಲೆ ಬಿದ್ದವು, ಅವು ಮೊಳೆತ ಕೂಡಲೇ ತೇವ ಇಲ್ಲದಿರುವ ಕಾರಣ ಒಣಗಿಹೋದವು.</verse>
				<verse number="7">ಇನ್ನು ಕೆಲವು ಮುಳ್ಳುಗಿಡಗಳ ಮಧ್ಯದಲ್ಲಿ ಬಿದ್ದವು, ಆಗ ಮುಳ್ಳುಗಿಡಗಳು ಅವುಗಳೊಂದಿಗೆ ಬೆಳೆದು ಅವುಗಳನ್ನು ಅಡಗಿಸಿಬಿಟ್ಟವು.</verse>
				<verse number="8">ಉಳಿದ ಬೀಜಗಳು ಒಳ್ಳೆಯ ನೆಲದ ಮೇಲೆ ಬಿದ್ದವು. ಆಗ ಅವು ಬೆಳೆದು ನೂರರಷ್ಟು ಫಲಕೊಟ್ಟವು.” ಇದನ್ನು ಯೇಸು ಹೇಳಿ, “ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ,” ಎಂದು ಒತ್ತಿ ಹೇಳಿದರು.</verse>
				<verse number="9">ಯೇಸುವಿನ ಶಿಷ್ಯರು ಅವರನ್ನು ಈ ಸಾಮ್ಯದ ಅರ್ಥ ಏನಾಗಿರಬಹುದು? ಎಂದು ಕೇಳಿದರು.</verse>
				<verse number="10">ಅದಕ್ಕೆ ಯೇಸು, “ದೇವರ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವುದಕ್ಕೆ ನಿಮಗೆ ಅನುಮತಿಸಲಾಗಿದೆ, ಆದರೆ ಉಳಿದವರಿಗೆ, “ ‘ಅವರು ಕಣ್ಣಾರೆ ನೋಡಿದರೂ ಕಾಣದಂತೆಯೂ; ಮತ್ತು ಕೇಳಿದರೂ ಗ್ರಹಿಸದಂತೆ ಸಾಮ್ಯಗಳಲ್ಲಿ ಮರೆಯಾಗಿವೆ.’</verse>
				<verse number="11">“ಆ ಸಾಮ್ಯದ ಅರ್ಥ ಹೀಗಿದೆ: ಬೀಜ ಎಂದರೆ ದೇವರ ವಾಕ್ಯ.</verse>
				<verse number="12">ವಾಕ್ಯವನ್ನು ಕೇಳಿದವರು ನಂಬಿ ರಕ್ಷಣೆ ಹೊಂದಿಕೊಳ್ಳದಂತೆ, ಪಿಶಾಚನು ಬಂದು ಅವರ ಹೃದಯದೊಳಗಿಂದ, ಆ ವಾಕ್ಯವನ್ನು ತೆಗೆದುಬಿಡುತ್ತಾನೆ, ಇವರೇ ಆ ಬೀಜಗಳು ಬಿದ್ದ ಪಕ್ಕದ ದಾರಿಯಾಗಿದ್ದಾರೆ.</verse>
				<verse number="13">ಬೀಜ ಬಿದ್ದ ಕಲ್ಲುಭೂಮಿಯು ಯಾರೆಂದರೆ ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಸ್ವೀಕರಿಸುವವರು, ಆದರೆ ಇವರು ಬೇರಿಲ್ಲದಿರುವುದರಿಂದ, ಸ್ವಲ್ಪಕಾಲ ನಂಬಿ, ಶೋಧನೆ ಬಂದಾಗ ಬಿದ್ದುಹೋಗುವವರು.</verse>
				<verse number="14">ಬೀಜ ಬಿದ್ದ ಮುಳ್ಳುನೆಲವು ಯಾರೆಂದರೆ ವಾಕ್ಯವನ್ನು ಕೇಳಿದ ಮೇಲೆ ಮುಂದುವರಿದು, ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಮತ್ತು ಭೋಗಗಳಿಂದಲೂ ಅದುಮಿಬಿಟ್ಟು, ಪರಿಪಕ್ವತೆಗೆ ಫಲಕೊಡದಿದ್ದವರು.</verse>
				<verse number="15">ಆದರೆ ಬೀಜ ಬಿದ್ದ ಒಳ್ಳೆಯ ಭೂಮಿಯವರು ಯಾರೆಂದರೆ ಯಥಾರ್ಥವಾದ ಒಳ್ಳೆಯ ಹೃದಯದಿಂದ, ವಾಕ್ಯವನ್ನು ಕೇಳಿ ಅದನ್ನು ಕೈಕೊಂಡು, ತಾಳ್ಮೆಯಿಂದ ಫಲಿಸುವವರೇ,” ಎಂದು ಹೇಳಿದರು.</verse>
				<verse number="16">“ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆಯಿಂದ ಮುಚ್ಚುವುದಿಲ್ಲ, ಇಲ್ಲವೆ ಮಂಚದ ಕೆಳಗೆ ಇಡುವುದಿಲ್ಲ. ಆದರೆ ಮನೆಯೊಳಗೆ ಪ್ರವೇಶಿಸುವವರು ಬೆಳಕನ್ನು ಕಾಣುವಂತೆ, ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.</verse>
				<verse number="17">ಪ್ರಕಟವಾಗದಂತೆ ಯಾವುದೂ ಮರೆಯಾಗಿರುವುದಿಲ್ಲ, ಬೆಳಕಿಗೆ ಬಾರದೆ ಇರುವ ರಹಸ್ಯವು ಯಾವುದೂ ಇಲ್ಲ.</verse>
				<verse number="18">ಆದ್ದರಿಂದ ನೀವು ಕೇಳುವ ವಿಷಯಗಳಲ್ಲಿ ಎಚ್ಚರಿಕೆಯಾಗಿರಿ. ಏಕೆಂದರೆ ಇದ್ದವರಿಗೆ ಇನ್ನೂ ಹೆಚ್ಚಾಗಿ ಕೊಡಲಾಗುವುದು; ಇಲ್ಲದವರ ಕಡೆಯಿಂದ ತಮಗಿದೆ ಎಂದುಕೊಳ್ಳುವುದನ್ನು ಸಹ, ಅವರಿಂದ ಕಿತ್ತುಕೊಳ್ಳಲಾಗುವುದು,” ಎಂದು ಹೇಳಿದರು.</verse>
				<verse number="19">ಯೇಸುವಿನ ತಾಯಿ ಮತ್ತು ಸಹೋದರರು ಅವರಿದ್ದಲ್ಲಿಗೆ ಬಂದು ಜನರ ಗುಂಪಿನ ನಿಮಿತ್ತ ಅವರ ಬಳಿಗೆ ಹೋಗಲಾರದೆ ಇದ್ದರು.</verse>
				<verse number="20">ಆಗ ಒಬ್ಬನು ಯೇಸುವಿಗೆ, “ನಿಮ್ಮ ತಾಯಿಯೂ ಸಹೋದರರೂ ನಿಮ್ಮನ್ನು ಕಾಣಬೇಕೆಂದು, ಅಪೇಕ್ಷಿಸಿ ಹೊರಗೆ ನಿಂತಿದ್ದಾರೆ,” ಎಂದನು.</verse>
				<verse number="21">ಅದಕ್ಕೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನ್ನ ತಾಯಿ ಮತ್ತು ನನ್ನ ಸಹೋದರರು ಆಗಿದ್ದಾರೆ,” ಎಂದು ಹೇಳಿದರು.</verse>
				<verse number="22">ಒಂದು ದಿನ ಯೇಸು ತಮ್ಮ ಶಿಷ್ಯರಿಗೆ, “ನಾವು ಕೆರೆಯ ಆಚೆದಡಕ್ಕೆ ಹೋಗೋಣ,” ಎಂದು ಹೇಳಿದರು, ಆಗ ಅವರು ದೋಣಿಯನ್ನು ಹತ್ತಿ ಹೊರಟರು.</verse>
				<verse number="23">ಆದರೆ ಅವರು ಪ್ರಯಾಣ ಮಾಡುತ್ತಿದ್ದಾಗ, ಯೇಸು ನಿದ್ರಿಸುತ್ತಿದ್ದರು. ಆಗ ಬಿರುಗಾಳಿಯು ಸರೋವರದ ಮೇಲೆ ಬೀಸಲು, ದೋಣಿಯು ನೀರಿನಿಂದ ತುಂಬಿದ್ದರಿಂದ, ಅವರು ಅಪಾಯಕ್ಕೊಳಗಾದರು.</verse>
				<verse number="24">ಆಗ ಶಿಷ್ಯರು ಯೇಸುವಿನ ಬಳಿ ಬಂದು ಅವರನ್ನು ಎಬ್ಬಿಸಿ, “ಗುರುವೇ, ಗುರುವೇ, ನಾವು ಮುಳುಗುತ್ತಿದ್ದೇವೆ!” ಎಂದರು. ಆಗ ಯೇಸು ಎದ್ದು ಬಿರುಗಾಳಿಯನ್ನೂ ರಭಸವಾಗಿ ಬರುತ್ತಿದ್ದ ಅಲೆಗಳನ್ನೂ ಗದರಿಸಿದರು; ಆಗ ಬಿರುಗಾಳಿಯು ನಿಂತು ಹೋಗಿ, ಎಲ್ಲಾ ಪ್ರಶಾಂತವಾಯಿತು.</verse>
				<verse number="25">ಆಗ ಯೇಸು ತಮ್ಮ ಶಿಷ್ಯರಿಗೆ, “ನಿಮ್ಮ ನಂಬಿಕೆ ಎಲ್ಲಿ?” ಎಂದರು. ಅವರು ಹೆದರಿದವರಾಗಿ ಆಶ್ಚರ್ಯದಿಂದ ಒಬ್ಬರಿಗೊಬ್ಬರು, “ಇವರು ಯಾರಿರಬಹುದು? ಗಾಳಿಗೂ ನೀರಿಗೂ ಸಹ ಅಪ್ಪಣೆ ಕೊಡುತ್ತಾರಲ್ಲಾ. ಅವು ಇವರು ಹೇಳಿದ ಹಾಗೆ ಕೇಳುತ್ತಾವಲ್ಲಾ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.</verse>
				<verse number="26">ಅವರು ಗಲಿಲಾಯಕ್ಕೆ ಎದುರಾಗಿದ್ದ, ಗೆರಸೇನರ ಸೀಮೆಗೆ ತಲುಪಿದರು.</verse>
				<verse number="27">ಯೇಸು ದಡಕ್ಕೆ ಸೇರಿದಾಗ, ಬಹುಕಾಲದಿಂದ ದೆವ್ವಗಳು ಹಿಡಿದು ಬಟ್ಟೆ ಧರಿಸಿಕೊಳ್ಳದೆ ಯಾವ ಮನೆಯಲ್ಲಿ ಇರದೆ ಸಮಾಧಿಯ ಗುಹೆಗಳಲ್ಲಿ ವಾಸಿಸುತ್ತಿದ್ದ ಒಬ್ಬ ಮನುಷ್ಯನನ್ನು ಯೇಸು ಸಂಧಿಸಿದರು.</verse>
				<verse number="28">ಅವನು ಯೇಸುವನ್ನು ಕಂಡಾಗ, ಅವರ ಮುಂದೆ ಅಡ್ಡಬಿದ್ದು, “ಯೇಸುವೇ, ಮಹೋನ್ನತ ದೇವಪುತ್ರರೇ, ನನ್ನ ಗೊಡವೆ ನಿಮಗೆ ಏಕೆ? ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.</verse>
				<verse number="29">ಏಕೆಂದರೆ, ದೆವ್ವಕ್ಕೆ ಅವನಿಂದ ಹೊರಗೆ ಬರಬೇಕೆಂದು ಯೇಸು ಅಪ್ಪಣೆ ಕೊಟ್ಟಿದ್ದರು. ಅದು ಬಹಳ ಸಾರಿ ಅವನನ್ನು ಹಿಡಿಯುತ್ತಿದ್ದುದರಿಂದ, ಅವನು ಸರಪಣಿಗಳಿಂದಲೂ ಬೇಡಿಗಳಿಂದಲೂ ಬಂಧಿತನಾದರೂ ಅವನು ಆ ಬಂಧನಗಳನ್ನು ಮುರಿದು ಬಿಡುತ್ತಿದ್ದನು ಮತ್ತು ದೆವ್ವವು ಅವನನ್ನು ಏಕಾಂತ ಸ್ಥಳಕ್ಕೆ ಓಡಿಸಿಕೊಂಡು ಹೋಗುತ್ತಿತ್ತು.</verse>
				<verse number="30">ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದರು. ಅದಕ್ಕವನು, “ಸೇನೆ,” ಎಂದನು. ಏಕೆಂದರೆ ಬಹಳ ದೆವ್ವಗಳು ಅವನಲ್ಲಿ ಸೇರಿಕೊಂಡಿದ್ದವು.</verse>
				<verse number="31">ಅವು ತಮ್ಮನ್ನು ಪಾತಾಳಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಯೇಸುವನ್ನು ಬೇಡಿಕೊಂಡವು.</verse>
				<verse number="32">ಆಗ ಅಲ್ಲಿ ಬೆಟ್ಟದ ಮೇಲೆ ಹಂದಿಗಳ ಹಿಂಡು ಮೇಯುತ್ತಿದ್ದರಿಂದ ಅವುಗಳೊಳಗೆ ತಾವು ಸೇರಿಕೊಳ್ಳಲು ಅಪ್ಪಣೆ ಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು, ಅವರು ಅವುಗಳಿಗೆ ಅನುಮತಿ ಕೊಟ್ಟರು.</verse>
				<verse number="33">ಆಗ ಆ ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು, ಹಂದಿಗಳೊಳಗೆ ಸೇರಿದವು. ಆ ಗುಂಪು ಚುರುಕಾಗಿ ಓಡಿ, ಕಡಿದಾದ ಬದಿಯಿಂದ ಸರೋವರಕ್ಕೆ ಬಿದ್ದು ಮುಳುಗಿಹೋಯಿತು.</verse>
				<verse number="34">ಹಂದಿಗಳನ್ನು ಮೇಯಿಸುತ್ತಿದ್ದವರು ನಡೆದದ್ದನ್ನು ಕಂಡು, ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ಅದನ್ನು ತಿಳಿಯಪಡಿಸಿದರು,</verse>
				<verse number="35">ಆಗ ಜನರು ನಡೆದ ಸಂಗತಿ ಏನೆಂದು ಕಾಣುವುದಕ್ಕಾಗಿ ಹೊರಟು ಯೇಸುವಿನ ಬಳಿಗೆ ಬಂದರು. ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ, ಯೇಸುವಿನ ಪಾದಗಳ, ಬಳಿಯಲ್ಲಿ ಕುಳಿತಿರುವುದನ್ನು ಕಂಡು ಭಯಪಟ್ಟರು.</verse>
				<verse number="36">ನಡೆದದ್ದನ್ನು ಕಂಡವರು, ಯಾವ ರೀತಿಯಲ್ಲಿ ದೆವ್ವಪೀಡಿತನಾಗಿದ್ದವನು ಮತ್ತೆ ಸ್ವಸ್ಥನಾದನೆಂದು ಅವರಿಗೆ ತಿಳಿಯಪಡಿಸಿದರು.</verse>
				<verse number="37">ಆಗ ಗೆರಸೇನರ ಸೀಮೆಯ ಸುತ್ತಮುತ್ತಲಿನ ಜನಸಮೂಹವೆಲ್ಲವು, ಬಹಳ ಭಯಹಿಡಿದವರಾದುದರಿಂದ ಅವರು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಯೇಸುವನ್ನು ಬೇಡಿಕೊಂಡರು. ಯೇಸು ದೋಣಿಯನ್ನು ಹತ್ತಿ ಹಿಂದಿರುಗಿದರು.</verse>
				<verse number="38">ಆಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ತಾನೂ ಅವರ ಜೊತೆಯಲ್ಲಿ ಬರುವೆನೆಂದು, ಯೇಸುವನ್ನು ಬೇಡಿಕೊಂಡನು, ಆದರೆ ಯೇಸು ಅವನಿಗೆ,</verse>
				<verse number="39">“ನೀನು ನಿನ್ನ ಮನೆಗೆ ಹಿಂದಿರುಗಿ ಹೋಗಿ ದೇವರು ನಿನಗೆ ಎಂಥಾ ಮಹಾಕಾರ್ಯಗಳನ್ನು ಮಾಡಿದ್ದಾರೆಂಬುದನ್ನು ಹೇಳು,” ಎಂದು ಅವನನ್ನು ಕಳುಹಿಸಿಬಿಟ್ಟರು. ಅವನು ತನ್ನ ಮಾರ್ಗವಾಗಿ ಹೊರಟುಹೋಗಿ ಯೇಸು ತನಗೆ ಮಾಡಿದ ಮಹಾಕಾರ್ಯಗಳನ್ನು ಊರೆಲ್ಲಾ ಸಾರಿದನು.</verse>
				<verse number="40">ಯೇಸು ಹಿಂತಿರುಗಿ ಬಂದಾಗ ಅವರ ಬರುವಿಕೆಯನ್ನು ಎದುರುನೋಡುತ್ತಿದ್ದ ಜನರೆಲ್ಲರೂ ಅವರನ್ನು ಸ್ವಾಗತಿಸಿದರು.</verse>
				<verse number="41">ಆಗ ಸಭಾಮಂದಿರದ ಅಧಿಕಾರಿಯಾಗಿದ್ದ, ಯಾಯೀರನೆಂಬವನು ಬಂದು ಯೇಸುವಿನ ಪಾದಗಳ ಮುಂದೆ ಅಡ್ಡಬಿದ್ದು, ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು</verse>
				<verse number="42">ಏಕೆಂದರೆ ಸುಮಾರು ಹನ್ನೆರಡು ವರ್ಷದ, ಅವನ ಒಬ್ಬಳೇ ಮಗಳು, ಸಾಯುವ ಹಾಗಿದ್ದಳು. ಯೇಸು ದಾರಿಯಲ್ಲಿ ಹೋಗುತ್ತಿದ್ದಾಗ, ಜನರು ಅವರನ್ನು ನೂಕಾಡುತ್ತಿದ್ದರು.</verse>
				<verse number="43">ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಿದ್ದ ಒಬ್ಬ ಸ್ತ್ರೀ ಆ ಗುಂಪಿನಲ್ಲಿದ್ದಳು. ಅವಳು ತನ್ನ ಆಸ್ತಿಯನ್ನೆಲ್ಲಾ ವೆಚ್ಚಮಾಡಿದ್ದರೂ ಆಕೆಯನ್ನು ಗುಣಪಡಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.</verse>
				<verse number="44">ಅವಳು ಯೇಸುವಿನ ಹಿಂದೆ ಬಂದು ಅವರ ಉಡುಪಿನ ಅಂಚನ್ನು ಮುಟ್ಟಿದಳು, ಕೂಡಲೇ ಆಕೆಯ ರಕ್ತಸ್ರಾವವು ನಿಂತುಹೋಯಿತು.</verse>
				<verse number="45">ಯೇಸು, “ನನ್ನನ್ನು ಮುಟ್ಟಿದವರು ಯಾರು?” ಎಂದರು. ಎಲ್ಲರೂ ನಿರಾಕರಿಸಿದರು, ಪೇತ್ರನು ಯೇಸುವಿಗೆ, “ಬೋಧಕರೇ, ಇಷ್ಟೊಂದು ಜನರು ನಿಮ್ಮನ್ನು ನೂಕುತ್ತಾ ನಿಮ್ಮನ್ನು ಒತ್ತುತ್ತಿದ್ದಾರಲ್ಲಾ” ಎಂದನು.</verse>
				<verse number="46">ಆದರೆ ಯೇಸು, “ಯಾರೋ ಒಬ್ಬರು ನನ್ನನ್ನು ಮುಟ್ಟಿದ್ದಾರೆ; ನನ್ನಿಂದ ಗುಣಪಡಿಸುವ ಶಕ್ತಿಯು ಹೊರಟಿತೆಂದು ನನಗೆ ತಿಳಿಯಿತು,” ಎಂದರು.</verse>
				<verse number="47">ಆ ಸ್ತ್ರೀಯು, ತಾನು ಇನ್ನು ಮರೆಮಾಡಲು ಸಾಧ್ಯವಿಲ್ಲವೆಂದು ತಿಳಿದು, ನಡುಗುತ್ತಾ ಬಂದು ಯೇಸುವಿನ ಮುಂದೆ ಅಡ್ಡಬಿದ್ದು, ಯಾವ ಕಾರಣದಿಂದ ಆಕೆಯು ಯೇಸುವನ್ನು ಮುಟ್ಟಿದಳೆಂದೂ ಹೇಗೆ ತಾನು ಕೂಡಲೇ ಸ್ವಸ್ಥಳಾದಳೆಂದೂ ಎಲ್ಲಾ ಜನರ ಮುಂದೆ ಅವರಿಗೆ ತಿಳಿಯಪಡಿಸಿದಳು.</verse>
				<verse number="48">ಆಗ ಯೇಸು ಆಕೆಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು,” ಎಂದರು.</verse>
				<verse number="49">ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಸಭಾಮಂದಿರದ ಅಧಿಕಾರಿಯಾದ ಯಾಯೀರನ ಮನೆಯಿಂದ ಒಬ್ಬನು ಬಂದು ಅಧಿಕಾರಿಗೆ, “ನಿನ್ನ ಮಗಳು ತೀರಿಹೋದಳು, ಇನ್ನೂ ಗುರುವಿಗೆ ತೊಂದರೆಪಡಿಸುವುದೇಕೆ?” ಎಂದನು.</verse>
				<verse number="50">ಯೇಸು ಅದನ್ನು ಕೇಳಿ, ಆ ಅಧಿಕಾರಿಗೆ, “ಭಯಪಡಬೇಡ; ನಂಬಿಕೆ ಮಾತ್ರ ಇರಲಿ, ಅವಳು ಬದುಕುವಳು,” ಎಂದು ಹೇಳಿದರು.</verse>
				<verse number="51">ಯೇಸು ಯಾಯೀರನ ಮನೆಯೊಳಕ್ಕೆ ಬಂದಾಗ ಪೇತ್ರ, ಯಾಕೋಬ ಯೋಹಾನ ಮತ್ತು ಹುಡುಗಿಯ ತಂದೆತಾಯಿಗಳ ಹೊರತು ಯಾರನ್ನೂ ಒಳಗೆ ಬರಗೊಡಲಿಲ್ಲ.</verse>
				<verse number="52">ಎಲ್ಲರೂ ಅಳುತ್ತಾ ಹುಡುಗಿಗಾಗಿ ಗೋಳಾಡುತ್ತಿದ್ದರು. ಯೇಸು, “ಅಳಬೇಡಿರಿ, ಆಕೆಯು ಸತ್ತಿಲ್ಲ, ನಿದ್ರೆ ಮಾಡುತ್ತಾಳೆ,” ಎಂದರು.</verse>
				<verse number="53">ಆಕೆಯು ಸತ್ತಿದ್ದಾಳೆಂದು ತಿಳಿದು ಅಳುತ್ತಿದ್ದವರು ಯೇಸುವನ್ನು ಹಾಸ್ಯಮಾಡಿದರು.</verse>
				<verse number="54">ಆದರೆ ಯೇಸು ಆಕೆಯ ಕೈಹಿಡಿದು, “ಮಗಳೇ, ಎದ್ದೇಳು!” ಎಂದು ಕರೆದರು.</verse>
				<verse number="55">ಆಗ ಆಕೆಯ ಪ್ರಾಣವು ಹಿಂದಿರುಗಿ ಬಂತು. ಕೂಡಲೇ ಆಕೆಯು ಎದ್ದಳು. ಆಕೆಗೆ ತಿನ್ನಲು ಏನಾದರೂ ಕೊಡುವಂತೆ ಯೇಸು ಅಪ್ಪಣೆಕೊಟ್ಟರು.</verse>
				<verse number="56">ಆಕೆಯ ತಂದೆತಾಯಿಗಳು ಬೆರಗಾದರು, ಆಗ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಯೇಸು ಅವರಿಗೆ ಆಜ್ಞಾಪಿಸಿದರು.</verse>
			</chapter>
			<chapter number="9">
				<verse number="1">ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಅವರಿಗೆ ಎಲ್ಲಾ ದೆವ್ವಗಳನ್ನು ಓಡಿಸುವುದಕ್ಕೂ ರೋಗಗಳನ್ನು ಸ್ವಸ್ಥಮಾಡುವುದಕ್ಕೂ ಅವರಿಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು,</verse>
				<verse number="2">ಶಿಷ್ಯರು ದೇವರ ರಾಜ್ಯವನ್ನು ಸಾರುವುದಕ್ಕೂ ರೋಗಿಗಳನ್ನು ಸ್ವಸ್ಥಮಾಡುವುದಕ್ಕೂ ಯೇಸು ಅವರನ್ನು ಕಳುಹಿಸಿಕೊಟ್ಟರು.</verse>
				<verse number="3">ಯೇಸು ಅವರಿಗೆ, “ನೀವು ಪ್ರಯಾಣಕ್ಕಾಗಿ ಕೋಲು, ಚೀಲ, ರೊಟ್ಟಿ ಅಥವಾ ಹಣವನ್ನು ತೆಗೆದುಕೊಳ್ಳಬೇಡಿರಿ; ಇದಲ್ಲದೆ ನಿಮಗೆ ಎರಡು ಅಂಗಿಗಳೂ ಇರಬಾರದು.</verse>
				<verse number="4">ನೀವು ಯಾವುದಾದರೂ ಮನೆಯನ್ನು ಪ್ರವೇಶಿಸಿದಾಗ, ಅಲ್ಲೇ ಇದ್ದು ಆ ಪಟ್ಟಣದಿಂದ ಹೋಗುವವರೆಗೆ ಆ ಮನೆಯಲ್ಲೇ ವಾಸವಾಗಿದ್ದು, ಅಲ್ಲಿಂದಲೇ ಹೊರಡಿರಿ.</verse>
				<verse number="5">ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ, ನೀವು ಆ ಪಟ್ಟಣದ ಹೊರಗೆ ಹೋದಾಗ ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರುವಂತೆ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ,” ಎಂದರು.</verse>
				<verse number="6">ಶಿಷ್ಯರು ಪ್ರತಿಯೊಂದು ಹಳ್ಳಿಗೆ ಹೋಗುತ್ತಾ, ಸುವಾರ್ತೆಯನ್ನು ಸಾರುತ್ತಾ, ಎಲ್ಲಾ ಕಡೆಗಳಲ್ಲಿ ರೋಗಿಗಳನ್ನು ಸ್ವಸ್ಥಮಾಡುತ್ತಾ ಹೋದರು.</verse>
				<verse number="7">ಚತುರಾಧಿಪತಿಯಾದ ಹೆರೋದನು ಯೇಸು ಮಾಡಿದವುಗಳನ್ನೆಲ್ಲಾ ಕೇಳಿ ಕಳವಳಗೊಂಡನು. ಏಕೆಂದರೆ ಯೋಹಾನನು ಸತ್ತವರೊಳಗಿಂದ ಎದ್ದಿದ್ದಾನೆಂದು ಕೆಲವರು ಹೇಳುತ್ತಿದ್ದರು.</verse>
				<verse number="8">ಕೆಲವರು ಎಲೀಯನು ಪ್ರತ್ಯಕ್ಷನಾಗಿದ್ದಾನೆಂದೂ ಇನ್ನೂ ಕೆಲವರು ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ತಿರುಗಿ ಎದ್ದಿದ್ದಾನೆಂದೂ ಹೇಳುತ್ತಿದ್ದರು.</verse>
				<verse number="9">ಆದರೆ ಹೆರೋದನು, “ನಾನು ಯೋಹಾನನನ್ನು ಶಿರಚ್ಛೇದನ ಮಾಡಿದೆ, ನಾನು ಯಾರನ್ನು ಕುರಿತು, ಈ ವಿಷಯಗಳನ್ನು ಕೇಳುತ್ತಿರುವೆ, ಈತನು ಯಾರು?” ಎಂದು ಹೇಳಿ ಅವನು ಯೇಸುವನ್ನು ಕಾಣಲು ಪ್ರಯತ್ನಿಸಿದನು.</verse>
				<verse number="10">ಅಪೊಸ್ತಲರು ಹಿಂದಿರುಗಿ ಬಂದು, ತಾವು ಮಾಡಿದವುಗಳನ್ನೆಲ್ಲಾ ಯೇಸುವಿಗೆ ತಿಳಿಸಿದರು. ಆಗ ಯೇಸು ಬೇತ್ಸಾಯಿದ ಎಂಬ ಹೆಸರಿನ ಪಟ್ಟಣಕ್ಕೆ ಪ್ರತ್ಯೇಕವಾಗಿ ಅವರನ್ನು ಕರೆದುಕೊಂಡು ಹೋದರು.</verse>
				<verse number="11">ಆದರೆ ಜನರು ಅದನ್ನು ತಿಳಿದು ಯೇಸುವನ್ನು ಹಿಂಬಾಲಿಸಿದರು. ಯೇಸು ಅವರನ್ನು ಸ್ವೀಕರಿಸಿ, ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಬೇಕಾಗಿದ್ದವರನ್ನು ಸ್ವಸ್ಥಮಾಡಿದರು.</verse>
				<verse number="12">ಸಂಜೆಯಾಗುತ್ತಿದ್ದಾಗ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಊಟವಸತಿಯನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡಿ. ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲ,” ಎಂದರು.</verse>
				<verse number="13">ಆದರೆ ಯೇಸು ಅವರಿಗೆ, “ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ,” ಎಂದರು. ಅದಕ್ಕೆ ಅವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನುಗಳಿಗಿಂತ ಹೆಚ್ಚೇನು ಇಲ್ಲ. ನಾವು ಹೋಗಿ ಈ ಜನರಿಗೆ ಬೇಕಾಗುವಷ್ಟು ಆಹಾರವನ್ನು ಕೊಂಡುಕೊಂಡು ಬರಬೇಕೆ?” ಎಂದರು.</verse>
				<verse number="14">ಅಲ್ಲಿ ಹೆಚ್ಚು ಕಡಿಮೆ ಗಂಡಸರೇ ಐದು ಸಾವಿರ ಮಂದಿ ಇದ್ದರು. ಆಗ ಯೇಸು ತಮ್ಮ ಶಿಷ್ಯರಿಗೆ, “ಪಂಕ್ತಿಗಳಲ್ಲಿ ಐವತ್ತರಂತೆ ಅವರನ್ನು ಕೂರಿಸಿರಿ,” ಎಂದರು.</verse>
				<verse number="15">ಅವರು ಹಾಗೆಯೇ ಮಾಡಿ, ಎಲ್ಲರನ್ನೂ ಕುಳ್ಳಿರಿಸಿದರು.</verse>
				<verse number="16">ತರುವಾಯ ಯೇಸು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ, ಅವುಗಳನ್ನು ಆಶೀರ್ವದಿಸಿ ಮುರಿದು, ತಮ್ಮ ಶಿಷ್ಯರಿಗೆ ಕೊಟ್ಟು ಜನರಿಗೆ ಹಂಚುವಂತೆ ತಿಳಿಸಿದರು.</verse>
				<verse number="17">ಅವರೆಲ್ಲರೂ ತಿಂದು ತೃಪ್ತರಾದರು. ಶಿಷ್ಯರು ಉಳಿದ ತುಂಡುಗಳನ್ನು ಕೂಡಿಸಲು ಹನ್ನೆರಡು ಬುಟ್ಟಿಗಳು ತುಂಬಿದವು.</verse>
				<verse number="18">ಯೇಸು ಏಕಾಂತವಾಗಿ ಪ್ರಾರ್ಥಿಸುತ್ತಿದ್ದಾಗ ಅವರ ಶಿಷ್ಯರು ಅವರೊಂದಿಗೆ ಇದ್ದರು, ಆಗ ಯೇಸು ಅವರಿಗೆ, “ಜನರು ನನ್ನನ್ನು ಯಾರೆನ್ನುತ್ತಾರೆ?” ಎಂದು ಕೇಳಿದರು.</verse>
				<verse number="19">ಅವರು ಉತ್ತರವಾಗಿ, “ಸ್ನಾನಿಕನಾದ ಯೋಹಾನನು ಎನ್ನುತ್ತಾರೆ. ಆದರೆ ಕೆಲವರು ಎಲೀಯನು. ಬೇರೆ ಕೆಲವರು ಪೂರ್ವಕಾಲದ ಪ್ರವಾದಿಗಳಲ್ಲಿ ಒಬ್ಬನು ಪುನಃ ಜೀವಂತನಾಗಿದ್ದಾನೆ ಎನ್ನುತ್ತಾರೆ,” ಎಂದು ಹೇಳಿದರು.</verse>
				<verse number="20">ಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಿದರು. ಆಗ ಪೇತ್ರನು, “ನೀವು ದೇವರು ಕಳುಹಿಸಿಕೊಟ್ಟ ಕ್ರಿಸ್ತನು,” ಎಂದು ಹೇಳಿದನು.</verse>
				<verse number="21">ಯೇಸು ಈ ಸಂಗತಿಯನ್ನು ಯಾರಿಗೂ ಹೇಳಬಾರದೆಂದು ಅವರಿಗೆ ಖಂಡಿತವಾಗಿ ಆಜ್ಞಾಪಿಸಿದರು.</verse>
				<verse number="22">ಅನಂತರ ಯೇಸು, “ಮನುಷ್ಯಪುತ್ರನಾದ ನಾನು ಅನೇಕ ಕಷ್ಟಗಳನ್ನು ಅನುಭವಿಸಿ ಜನನಾಯಕರಿಂದಲೂ ಮುಖ್ಯಯಾಜಕರಿಂದಲೂ ನಿಯಮ ಬೋಧಕರಿಂದಲೂ ತಿರಸ್ಕೃತನಾಗಿ, ಕೊಲೆಗೆ ಗುರಿಯಾಗಿ ಮೂರನೆಯ ದಿನದಲ್ಲಿ ಜೀವಂತವಾಗಿ ಏಳುವುದು ಅಗತ್ಯವಾಗಿದೆ,” ಎಂದು ಎಚ್ಚರಿಸಿದರು.</verse>
				<verse number="23">ಯೇಸು ಅವರೆಲ್ಲರಿಗೆ: “ಯಾರಾದರೂ ನನ್ನ ಶಿಷ್ಯರಾಗುವುದಕ್ಕೆ ಬಯಸಿದರೆ, ಅವರು ತಮ್ಮನ್ನು ನಿರಾಕರಿಸಿ ತಮ್ಮ ಶಿಲುಬೆಯನ್ನು ಪ್ರತಿದಿನ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.</verse>
				<verse number="24">ಯಾರಾದರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವವರು, ಅದನ್ನು ಕಳೆದುಕೊಳ್ಳುವರು, ಆದರೆ ನನ್ನ ನಿಮಿತ್ತವಾಗಿ ಯಾರಾದರೂ ತಮ್ಮ ಪ್ರಾಣವನ್ನು ಕಳೆದುಕೊಳ್ಳುವವರು ಅದನ್ನು ಕಂಡುಕೊಳ್ಳುವರು.</verse>
				<verse number="25">ಒಬ್ಬ ವ್ಯಕ್ತಿ ಲೋಕವನ್ನೆಲ್ಲಾ ಸಂಪಾದಿಸಿಕೊಂಡು, ತನ್ನನ್ನು ತಾನೇ ಹಾಳು ಮಾಡಿಕೊಂಡರೆ, ಇಲ್ಲವೆ ನಷ್ಟಪಡಿಸಿಕೊಂಡರೆ, ಆ ವ್ಯಕ್ತಿಗೆ ಪ್ರಯೋಜನವೇನು?</verse>
				<verse number="26">ಯಾರಾದರೂ ನನ್ನ ಮತ್ತು ನನ್ನ ವಾಕ್ಯಗಳ ವಿಷಯದಲ್ಲಿ ನಾಚಿಕೊಳ್ಳುವುದಾದರೆ, ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯೊಡನೆಯೂ ಪರಿಶುದ್ಧ ದೂತರೊಡನೆಯೂ ಬರುವಾಗ, ಅವರ ವಿಷಯದಲ್ಲಿ ನಾಚಿಕೊಳ್ಳುವೆನು.</verse>
				<verse number="27">“ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಇಲ್ಲಿ ನಿಂತವರಲ್ಲಿ ಕೆಲವರು ದೇವರ ರಾಜ್ಯವನ್ನು ಕಾಣುವತನಕ ಮರಣವನ್ನು ಹೊಂದುವುದೇ ಇಲ್ಲ,” ಎಂದರು.</verse>
				<verse number="28">ಈ ಮಾತುಗಳನ್ನು ಹೇಳಿ ಸುಮಾರು ಎಂಟು ದಿನಗಳಾದ ಮೇಲೆ ಯೇಸು, ಪೇತ್ರ, ಯೋಹಾನ ಮತ್ತು ಯಾಕೋಬರನ್ನು ಕರೆದುಕೊಂಡು ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟವನ್ನೇರಿದರು.</verse>
				<verse number="29">ಯೇಸು ಪ್ರಾರ್ಥನೆ ಮಾಡುತ್ತಿದ್ದಾಗ, ಅವರ ಮುಖಭಾವವು ಬದಲಾಯಿತು ಮತ್ತು ಅವರ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂತು.</verse>
				<verse number="30">ಮೋಶೆ ಮತ್ತು ಎಲೀಯನು ಎಂಬ ಇಬ್ಬರು ಪುರುಷರು ಯೇಸುವಿನೊಂದಿಗೆ ಮಾತನಾಡುತ್ತಿದ್ದರು.</verse>
				<verse number="31">ಇವರು ಮಹಿಮೆಯಲ್ಲಿ ಕಾಣಿಸಿಕೊಂಡು, ಯೇಸು ಯೆರೂಸಲೇಮಿನಲ್ಲಿ ಪೂರೈಸುವುದಕ್ಕಿದ್ದ ಅವರ ಮರಣದ ವಿಷಯವಾಗಿ ಮಾತನಾಡುತ್ತಿದ್ದರು.</verse>
				<verse number="32">ಆದರೆ ಪೇತ್ರನು ಅವನ ಸಂಗಡ ಇದ್ದವರೂ ನಿದ್ರೆಯಿಂದ ಭಾರವುಳ್ಳವರಾಗಿದ್ದರು, ಅವರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಅವರ ಕೂಡ ನಿಂತಿದ್ದ ಇಬ್ಬರು ಪುರುಷರನ್ನೂ ಕಂಡರು.</verse>
				<verse number="33">ಅವರು ಹೋಗುತ್ತಿದ್ದಾಗ ಪೇತ್ರನು ಯೇಸುವಿಗೆ, “ಗುರುವೇ, ನಾವು ಇಲ್ಲೇ ಇರುವುದು ನಮಗೆ ಒಳ್ಳೆಯದು, ನಾವು ನಿಮಗೊಂದು ಮೋಶೆಗೊಂದು ಮತ್ತು ಎಲೀಯನಿಗೊಂದು, ಹೀಗೆ ಮೂರು ಗುಡಾರಗಳನ್ನು ಕಟ್ಟುವೆವು,” ಎಂದನು. ತಾನು ಹೇಳಿದ್ದನ್ನು ಅವನು ಅರಿಯದೆ ಇದ್ದನು.</verse>
				<verse number="34">ಹೀಗೆ ಪೇತ್ರನು ಮಾತನಾಡುತ್ತಿದ್ದಾಗಲೇ, ಮೇಘವು ಬಂದು ಅವರನ್ನು ಕವಿದುಕೊಂಡಿತು ಮತ್ತು ಅವರು ಆ ಮೇಘದೊಳಗೆ ಪ್ರವೇಶಿಸುತ್ತಿದ್ದಾಗ ಶಿಷ್ಯರು ಭಯಪಟ್ಟರು.</verse>
				<verse number="35">ಆಗ ಮೇಘದೊಳಗಿಂದ, “ಈತನು, ನಾನು ಆರಿಸಿಕೊಂಡ ನನ್ನ ಮಗನು, ಈತನ ಮಾತನ್ನು ಕೇಳಿರಿ,” ಎಂದು ಹೇಳುವ ಧ್ವನಿಯಾಯಿತು.</verse>
				<verse number="36">ಧ್ವನಿಯಾದ ನಂತರ, ಅವರು ಯೇಸುವನ್ನು ಮಾತ್ರ ಕಂಡರು. ಅವರು ಕಂಡವುಗಳನ್ನು ಆ ದಿವಸಗಳಲ್ಲಿ ಯಾರಿಗೂ ತಿಳಿಸದೆ ಸುಮ್ಮನಿದ್ದರು.</verse>
				<verse number="37">ಮರುದಿನ, ಅವರು ಬೆಟ್ಟದಿಂದ ಕೆಳಗಿಳಿದು ಬಂದಾಗ, ಬಹಳ ಜನರು ಯೇಸುವನ್ನು ಸಂಧಿಸಿದರು.</verse>
				<verse number="38">ಆಗ ಆ ಗುಂಪಿನೊಳಗಿಂದ ಒಬ್ಬ ಮನುಷ್ಯನು ಕೂಗಿ, “ಬೋಧಕರೇ, ನನ್ನ ಮಗನ ಮೇಲೆ ದೃಷ್ಟಿಯಿಡಿರಿ ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ, ಏಕೆಂದರೆ ಅವನು ನನಗೆ ಒಬ್ಬನೇ ಮಗನು.</verse>
				<verse number="39">ದೆವ್ವವು ಅವನನ್ನು ಹಿಡಿಯುತ್ತಲೇ ಅವನು ಫಕ್ಕನೆ ಕೂಗಿಕೊಳ್ಳುತ್ತಾನೆ; ಇದಲ್ಲದೆ ಬಾಯಲ್ಲಿ ನೊರೆ ಸುರಿಯುವಷ್ಟು ಅವನನ್ನು ಒದ್ದಾಡಿಸುವುದಲ್ಲದೆ ಜಜ್ಜುತ್ತದೆ. ಅದು ಅವನನ್ನು ಬಿಟ್ಟು ಹೋಗುವುದು ಕಷ್ಟ.</verse>
				<verse number="40">ಅದನ್ನು ಓಡಿಸುವಂತೆ, ನಾನು ನಿಮ್ಮ ಶಿಷ್ಯರನ್ನು ಬೇಡಿಕೊಂಡೆನು, ಆದರೆ ಅದು ಅವರಿಂದ ಆಗಲಿಲ್ಲ,” ಎಂದನು.</verse>
				<verse number="41">ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಿಮ್ಮನ್ನು ಸಹಿಸಲಿ?” ಎಂದು ಹೇಳಿ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ,” ಎಂದರು.</verse>
				<verse number="42">ಅವನು ಇನ್ನೂ ಬರುತ್ತಿದ್ದಾಗಲೇ, ದೆವ್ವವು ಅವನನ್ನು ಒದ್ದಾಡಿಸಿ ನೆಲಕ್ಕೆ ಅಪ್ಪಳಿಸಿತು. ಯೇಸು ಆ ದೆವ್ವವನ್ನು ಗದರಿಸಿ ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಪುನಃ ಒಪ್ಪಿಸಿದರು.</verse>
				<verse number="43">ಆಗ ಜನರೆಲ್ಲರೂ ದೇವರ ಮಹತ್ತಾದ ಶಕ್ತಿಗಾಗಿ ಬೆರಗಾದರು. ಯೇಸು ಮಾಡಿದ ಎಲ್ಲಾ ಕಾರ್ಯಗಳಿಗಾಗಿ ಅವರಲ್ಲಿ ಪ್ರತಿಯೊಬ್ಬನೂ ಆಶ್ಚರ್ಯಪಡುತ್ತಿರುವಲ್ಲಿ, ಯೇಸು ತಮ್ಮ ಶಿಷ್ಯರಿಗೆ,</verse>
				<verse number="44">“ಈ ಮಾತುಗಳನ್ನು ಆಳವಾಗಿ ಗ್ರಹಿಸಿಕೊಳ್ಳಿರಿ: ಏಕೆಂದರೆ ಮನುಷ್ಯಪುತ್ರನಾದ ನಾನು ಮನುಷ್ಯರ ಕೈವಶವಾಗುವೆನು,” ಎಂದು ಹೇಳಿದರು.</verse>
				<verse number="45">ಆದರೆ ಶಿಷ್ಯರು ಈ ಮಾತನ್ನು ತಿಳಿದುಕೊಳ್ಳಲಿಲ್ಲ. ಅವರು ಗ್ರಹಿಸಲಾರದಂತೆ ಅದು ಅವರಿಗೆ ಮರೆಯಾಗಿತ್ತು, ಆ ಮಾತನ್ನು ಕುರಿತು ಯೇಸುವನ್ನು ಕೇಳುವುದಕ್ಕೆ ಅವರು ಭಯಪಟ್ಟರು.</verse>
				<verse number="46">ತಮ್ಮಲ್ಲಿ ಯಾವನು ಎಲ್ಲರಿಗಿಂತ ದೊಡ್ಡವನು ಎಂಬ ತರ್ಕವು ಶಿಷ್ಯರೊಳಗೆ ಎದ್ದಿತು.</verse>
				<verse number="47">ಯೇಸು, ಅವರ ಮನದ ಆಲೋಚನೆಯನ್ನು ತಿಳಿದವರಾಗಿ, ಒಂದು ಮಗುವನ್ನು ತಮ್ಮ ಬಳಿಯಲ್ಲಿ ನಿಲ್ಲಿಸಿ,</verse>
				<verse number="48">“ಯಾರು ಈ ಚಿಕ್ಕ ಮಗುವನ್ನು ನನ್ನ ಹೆಸರಿನಲ್ಲಿ ಸ್ವೀಕರಿಸಿಕೊಳ್ಳುತ್ತಾರೋ ಅವರು ನನ್ನನ್ನೇ ಸ್ವೀಕರಿಸಿಕೊಳ್ಳುತ್ತಾರೆ; ಯಾರು ನನ್ನನ್ನು ಸ್ವೀಕರಿಸಿಕೊಳ್ಳುತ್ತಾರೋ ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸಿಕೊಳ್ಳುತ್ತಾರೆ. ನಿಮ್ಮೆಲ್ಲರಲ್ಲಿ ಚಿಕ್ಕವನಾಗಿರುವವನೇ ದೊಡ್ಡವನಾಗಿರುವನು,” ಎಂದರು.</verse>
				<verse number="49">ಯೋಹಾನನು, “ಬೋಧಕರೇ, ಒಬ್ಬನು ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಓಡಿಸುವುದನ್ನು ನಾವು ಕಂಡು ಅವನಿಗೆ ಅಡ್ಡಿಮಾಡಿದೆವು, ಏಕೆಂದರೆ ಅವನು ನಮ್ಮೊಂದಿಗೆ ಸೇರಿದವನಲ್ಲ,” ಎಂದನು.</verse>
				<verse number="50">ಅದಕ್ಕೆ ಯೇಸು, “ಅವನನ್ನು ತಡೆಯಬೇಡಿರಿ, ನಿಮಗೆ ವಿರೋಧವಾಗಿರದವನು ನಿಮ್ಮ ಪಕ್ಷದವನೇ,” ಎಂದು ಹೇಳಿದರು.</verse>
				<verse number="51">ಯೇಸು ತಾವು ಸ್ವರ್ಗಕ್ಕೆ ಏರಿಹೋಗುವ ಕಾಲ ಬಂದಾಗ, ಯೆರೂಸಲೇಮಿಗೆ ಹೋಗುವುದಕ್ಕಾಗಿ ತಮ್ಮ ಮನಸ್ಸನ್ನು ದೃಢಮಾಡಿಕೊಂಡು</verse>
				<verse number="52">ತಮಗೆ ಮುಂದಾಗಿ ಶಿಷ್ಯರನ್ನು ದೂತರನ್ನಾಗಿ ಕಳುಹಿಸಿದರು. ಅವರು ಹೋಗಿ ಅವರಿಗಾಗಿ ಎಲ್ಲವನ್ನೂ ಸಿದ್ಧಪಡಿಸುವಂತೆ ಸಮಾರ್ಯದ ಒಂದು ಹಳ್ಳಿಯೊಳಕ್ಕೆ ಪ್ರವೇಶಿಸಿದರು.</verse>
				<verse number="53">ಆದರೆ ಸಮಾರ್ಯದವರು ಯೇಸುವನ್ನು ಸ್ವೀಕರಿಸಲಿಲ್ಲ, ಏಕೆಂದರೆ ಯೇಸು ಯೆರೂಸಲೇಮಿಗೆ ಹೋಗುವವರಾಗಿದ್ದರು.</verse>
				<verse number="54">ಯೇಸುವಿನ ಶಿಷ್ಯರಾದ ಯಾಕೋಬ ಮತ್ತು ಯೋಹಾನರು ಇದನ್ನು ಕಂಡು, “ಕರ್ತದೇವರೇ, ಎಲೀಯನು ಮಾಡಿದ ಪ್ರಕಾರ ಇವರನ್ನು ದಹಿಸಿಬಿಡುವಂತೆ ಆಕಾಶದಿಂದ ಬೆಂಕಿ ಬೀಳುವ ಹಾಗೆ ನಾವು ಅಪ್ಪಣೆಕೊಡಲು ನಿಮಗೆ ಒಪ್ಪಿಗೆ ಇದೆಯೋ?” ಎಂದು ಕೇಳಿದರು.</verse>
				<verse number="55">ಆದರೆ ಯೇಸು ಅವರ ಕಡೆ ತಿರುಗಿ ಅವರನ್ನು ಗದರಿಸಿ, “ನೀವು ಎಂಥ ಆತ್ಮದವರಾಗಿದ್ದೀರೆಂದು ನಿಮಗೆ ತಿಳಿಯದು.</verse>
				<verse number="56">ಮನುಷ್ಯಪುತ್ರನಾದ ನಾನು ಮನುಷ್ಯರ ಪ್ರಾಣಗಳನ್ನು ನಾಶಮಾಡುವುದಕ್ಕಾಗಿ ಅಲ್ಲ, ಅವರನ್ನು ರಕ್ಷಿಸುವುದಕ್ಕಾಗಿ ಬಂದೆನು,” ಎಂದು ಹೇಳಿದರು. ಅನಂತರ ಅವರು ಮತ್ತೊಂದು ಹಳ್ಳಿಗೆ ಹೋದರು.</verse>
				<verse number="57">ಅವರು ದಾರಿಯಲ್ಲಿ ಹೋಗುತ್ತಿರುವಾಗ, ಒಬ್ಬನು ಯೇಸುವಿಗೆ, “ನೀವು ಎಲ್ಲಿಗೆ ಹೋದರೂ ನಾನು ನಿಮ್ಮನ್ನು ಹಿಂಬಾಲಿಸುವೆನು” ಎಂದನು.</verse>
				<verse number="58">ಯೇಸು ಅವನಿಗೆ, “ನರಿಗಳಿಗೆ ಗುಹೆಗಳಿವೆ, ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಪುತ್ರನಾದ ನನಗೆ ತಲೆಯಿಡುವುದಕ್ಕೂ ಸ್ಥಳ ಇಲ್ಲ,” ಎಂದರು.</verse>
				<verse number="59">ಯೇಸು ಮತ್ತೊಬ್ಬನಿಗೆ, “ನನ್ನನ್ನು ಹಿಂಬಾಲಿಸು,” ಎಂದರು. ಆದರೆ ಅವನು, “ಕರ್ತದೇವರೇ, ಮೊದಲು ನಾನು ಹೋಗಿ ನನ್ನ ತಂದೆಯ ಶವಸಂಸ್ಕಾರ ಮಾಡಿಬರಲು ಅನುಮತಿಕೊಡಿರಿ,” ಎಂದನು.</verse>
				<verse number="60">ಯೇಸು ಅವನಿಗೆ, “ಸತ್ತವರೇ ತಮ್ಮವರಲ್ಲಿ ಸತ್ತುಹೋದವರನ್ನು ಸಮಾಧಿ ಮಾಡಿಕೊಳ್ಳಲಿ, ಆದರೆ ನೀನು ಹೋಗಿ ದೇವರ ರಾಜ್ಯವನ್ನು ಸಾರು,” ಎಂದರು.</verse>
				<verse number="61">ಇದಲ್ಲದೆ ಮತ್ತೊಬ್ಬನು ಸಹ, “ಕರ್ತದೇವರೇ, ನಾನು ನಿಮ್ಮನ್ನು ಹಿಂಬಾಲಿಸುವೆನು, ಆದರೆ ನಾನು ಮೊದಲು ಹೋಗಿ ನನ್ನ ಮನೆಯಲ್ಲಿದ್ದವರನ್ನು ಬೀಳ್ಕೊಡುವಂತೆ ನನಗೆ ಅಪ್ಪಣೆಕೊಡಿ,” ಎಂದನು.</verse>
				<verse number="62">ಆಗ ಯೇಸು ಅವನಿಗೆ, “ನೇಗಿಲಿನ ಮೇಲೆ ತನ್ನ ಕೈಯನ್ನಿಟ್ಟು ಹಿಂದಕ್ಕೆ ನೋಡುವವನು ದೇವರ ರಾಜ್ಯಕ್ಕೆ ಯೋಗ್ಯನಲ್ಲ,” ಎಂದರು.</verse>
			</chapter>
			<chapter number="10">
				<verse number="1">ಇವುಗಳಾದ ಮೇಲೆ ಕರ್ತದೇವರು ಬೇರೆ ಎಪ್ಪತ್ತೆರಡು ಮಂದಿಯನ್ನು ಸಹ ನೇಮಿಸಿ ತಾವೇ ಸ್ವತಃ ಹೋಗಬೇಕೆಂದಿದ್ದ ಪ್ರತಿಯೊಂದು ಪಟ್ಟಣಕ್ಕೂ ಸ್ಥಳಕ್ಕೂ ಇಬ್ಬಿಬ್ಬರನ್ನಾಗಿ ತಮಗೆ ಮುಂದಾಗಿ ಕಳುಹಿಸಿದರು.</verse>
				<verse number="2">ಯೇಸು ಅವರಿಗೆ, “ಬೆಳೆಯೋ ಬಹಳವಾಗಿದೆ, ಕೆಲಸದವರೋ ಕೆಲವರು. ಆದ್ದರಿಂದ, ಬೆಳೆಯ ಯಜಮಾನನನ್ನು ತನ್ನ ಬೆಳೆಗೆ ತಕ್ಕಷ್ಟು ಕೆಲಸದವರನ್ನು ಕಳುಹಿಸುವಂತೆ, ನೀವು ಬೇಡಿಕೊಳ್ಳಿರಿ.</verse>
				<verse number="3">ಹೋಗಿರಿ! ತೋಳಗಳ ಮಧ್ಯದಲ್ಲಿ ಕುರಿಮರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.</verse>
				<verse number="4">ಹಣದ ಚೀಲವನ್ನಾಗಲಿ, ಪ್ರಯಾಣದ ಚೀಲವನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ; ದಾರಿಯಲ್ಲಿ ಯಾರನ್ನೂ ಕುಶಲ ವಿಚಾರ ಮಾಡಿಕೊಂಡಿರಬೇಡಿರಿ.</verse>
				<verse number="5">“ನೀವು ಯಾವ ಮನೆಯನ್ನಾದರೂ ಪ್ರವೇಶಿಸುವಾಗ ಮೊದಲು, ‘ಈ ಮನೆಗೆ ಸಮಾಧಾನವಾಗಲಿ,’ ಎಂದು ಹೇಳಿರಿ.</verse>
				<verse number="6">ಅಲ್ಲಿ ಸಮಾಧಾನದ ಮನುಷ್ಯನು ಇದ್ದರೆ, ನಿಮ್ಮ ಸಮಾಧಾನವು ಅವನ ಮೇಲೆ ಇರುವುದು; ಇಲ್ಲದಿದ್ದರೆ, ಅದು ನಿಮಗೇ ಹಿಂದಿರುಗುವುದು.</verse>
				<verse number="7">ಮನೆಯಿಂದ ಮನೆಗೆ ಹೋಗದೆ, ಅದೇ ಮನೆಯಲ್ಲಿದ್ದು, ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ. ಕೆಲಸದವನು ತನ್ನ ಕೂಲಿಗೆ ಯೋಗ್ಯನು.</verse>
				<verse number="8">“ಯಾವುದಾದರೂ ಒಂದು ಪಟ್ಟಣದೊಳಗೆ ನೀವು ಪ್ರವೇಶಿಸುವಾಗ, ಅವರು ನಿಮ್ಮನ್ನು ಸೇರಿಸಿಕೊಂಡರೆ ಅವರು ನೀಡಿದ್ದನ್ನು ತಿನ್ನಿರಿ.</verse>
				<verse number="9">ಅಲ್ಲಿರುವ ರೋಗಿಗಳನ್ನು ಸ್ವಸ್ಥಮಾಡಿ, ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ,’ ಎಂದು ಹೇಳಿರಿ.</verse>
				<verse number="10">ಆದರೆ ನೀವು ಪ್ರವೇಶಿಸುವ ಯಾವ ಪಟ್ಟಣದಲ್ಲಿಯಾದರೂ ಅವರು ನಿಮ್ಮನ್ನು ಸೇರಿಸಿಕೊಳ್ಳದಿದ್ದರೆ, ನೀವು ಅದರ ಬೀದಿಗಳಲ್ಲಿ ಹೋಗಿ,</verse>
				<verse number="11">‘ನಮ್ಮ ಪಾದಗಳಿಗೆ ಅಂಟಿಕೊಂಡಿರುವ ನಿಮ್ಮ ಪಟ್ಟಣದ ಧೂಳನ್ನೇ ನಿಮಗೆ ವಿರೋಧವಾಗಿ ನಾವು ಝಾಡಿಸಿಬಿಡುತ್ತೇವೆ. ಆದರೂ ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿರಲಿ,’ ಎಂದು ಹೇಳಿರಿ.</verse>
				<verse number="12">ಆದರೆ ನ್ಯಾಯತೀರ್ಪಿನ ದಿನ, ಆ ಪಟ್ಟಣಕ್ಕಿಂತಲೂ ಸೊದೋಮಿನ ಗತಿ ಹೆಚ್ಚು ತಾಳಬಹುದಾಗಿರುವುದು ಎಂದು ನಾನು ನಿಮಗೆ ಹೇಳುತ್ತೇನೆ.</verse>
				<verse number="13">“ಖೊರಾಜಿನೇ, ನಿನಗೆ ಕಷ್ಟ! ಬೇತ್ಸಾಯಿದವೇ, ನಿನಗೆ ಕಷ್ಟ! ಏಕೆಂದರೆ ನಿಮ್ಮಲ್ಲಿ ನಡೆದ ಅದ್ಭುತಗಳು ಟೈರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅಲ್ಲಿಯವರು ಬಹಳ ಕಾಲದ ಹಿಂದೆಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ದೇವರ ಕಡೆ ತಿರುಗಿಕೊಳ್ಳುತ್ತಿದ್ದರು.</verse>
				<verse number="14">ಆದರೆ ನ್ಯಾಯತೀರ್ಪಿನಲ್ಲಿ ನಿಮ್ಮ ಗತಿಗಿಂತಲೂ ಟೈರ್ ಮತ್ತು ಸೀದೋನ್ ಪಟ್ಟಣಗಳ ಗತಿಯು ಹೆಚ್ಚು ತಾಳಬಹುದಾಗಿರುವುದು.</verse>
				<verse number="15">ಕಪೆರ್ನೌಮೇ, ನೀನು ಪರಲೋಕಕ್ಕೆ ಹೋಗುವೆ ಎಂದು ನೆನೆಸುತ್ತೀಯೋ? ಇಲ್ಲ, ನೀನು ಪಾತಾಳಕ್ಕೆ ಇಳಿಯುವೆ.</verse>
				<verse number="16">“ನಿಮ್ಮ ಮಾತನ್ನು ಕೇಳುವವರು ನನ್ನ ಮಾತನ್ನು ಕೇಳುತ್ತಾರೆ; ನಿಮ್ಮನ್ನು ತಿರಸ್ಕರಿಸುವವರು ನನ್ನನ್ನು ತಿರಸ್ಕರಿಸುತ್ತಾರೆ; ಆದರೆ ನನ್ನನ್ನು ತಿರಸ್ಕರಿಸುವವರು ನನ್ನನ್ನು ಕಳುಹಿಸಿದಾತನನ್ನೇ ತಿರಸ್ಕರಿಸುತ್ತಾರೆ,” ಎಂದರು.</verse>
				<verse number="17">ಆ ಎಪ್ಪತ್ತೆರಡು ಮಂದಿ ಸಂತೋಷದಿಂದ ಹಿಂತಿರುಗಿ, “ಕರ್ತದೇವರೇ, ನಿಮ್ಮ ಹೆಸರಿನಲ್ಲಿ ದೆವ್ವಗಳು ಸಹ ನಮಗೆ ಅಧೀನವಾದವು,” ಎಂದರು.</verse>
				<verse number="18">ಯೇಸು ಅವರಿಗೆ, “ಸೈತಾನನು ಮಿಂಚಿನ ಹಾಗೆ ಆಕಾಶದಿಂದ ಬೀಳುವುದನ್ನು ನಾನು ಕಂಡೆನು.</verse>
				<verse number="19">ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವುದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ; ಯಾವುದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡಲಾರದು.</verse>
				<verse number="20">ಹೀಗಿದ್ದರೂ, ದೆವ್ವಗಳು ನಿಮಗೆ ಅಧೀನವಾಗಿವೆ ಎಂದು ಸಂತೋಷ ಪಡಬೇಡಿರಿ, ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಲಿಖಿತವಾಗಿವೆ ಎಂದು ಸಂತೋಷಿಸಿರಿ,” ಎಂದರು.</verse>
				<verse number="21">ಆ ಸಮಯದಲ್ಲಿ ಯೇಸು, ಪವಿತ್ರಾತ್ಮರ ಮುಖಾಂತರ ಆನಂದಗೊಂಡು, “ತಂದೆಯೇ, ಪರಲೋಕ, ಭೂಲೋಕಗಳ ಒಡೆಯರೇ, ನೀವು ಈ ವಿಷಯಗಳನ್ನು ಜ್ಞಾನಿಗಳಿಂದಲೂ ಬುದ್ಧಿವಂತರಿಂದಲೂ ಮರೆಮಾಡಿ, ಶಿಶುಗಳಿಗೆ ಪ್ರಕಟ ಮಾಡಿರುವುದರಿಂದ ನಾನು ನಿಮ್ಮನ್ನು ಕೊಂಡಾಡುತ್ತೇನೆ. ಹೌದು ತಂದೆಯೇ, ಹೀಗೆ ಮಾಡುವುದು ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋಚಿತು.</verse>
				<verse number="22">“ನನ್ನ ತಂದೆ ಎಲ್ಲವನ್ನೂ ನನಗೆ ಒಪ್ಪಿಸಿದ್ದಾರೆ. ತಂದೆಯ ಹೊರತು ಯಾರೂ ಪುತ್ರನನ್ನು ಅರಿಯರು ಮತ್ತು ಪುತ್ರನು ಯಾರಿಗೆ ತಂದೆಯನ್ನು ಪ್ರಕಟಪಡಿಸಲು ಇಷ್ಟಪಡುತ್ತಾರೋ ಅವರೇ ಹೊರತು ಯಾರೂ ತಂದೆಯನ್ನು ಅರಿಯರು,” ಎಂದರು.</verse>
				<verse number="23">ಯೇಸು ತಮ್ಮ ಶಿಷ್ಯರ ಕಡೆಗೆ ತಿರುಗಿಕೊಂಡು, “ನೀವು ಕಾಣುತ್ತಿರುವುದನ್ನೆಲ್ಲಾ ಕಾಣುವ ಕಣ್ಣುಗಳು ಭಾಗ್ಯವುಳ್ಳವು.</verse>
				<verse number="24">ಏಕೆಂದರೆ ಅನೇಕ ಪ್ರವಾದಿಗಳು ಮತ್ತು ಅರಸರು ನೀವು ಕಾಣುವಂಥವುಗಳನ್ನು ಕಾಣಬೇಕೆಂದು ಅಪೇಕ್ಷಿಸಿದರೂ ಕಾಣಲಿಲ್ಲ ಮತ್ತು ನೀವು ಕೇಳುವಂಥವುಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಅವರು ಕೇಳಲಿಲ್ಲ, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.</verse>
				<verse number="25">ಒಂದು ಸಂದರ್ಭದಲ್ಲಿ ಒಬ್ಬ ನಿಯಮ ಬೋಧಕನು ಎದ್ದು ನಿಂತು ಯೇಸುವನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಕೇಳಿದನು.</verse>
				<verse number="26">ಯೇಸು ಅವನಿಗೆ, “ಮೋಶೆಯ ನಿಯಮದಲ್ಲಿ ಏನು ಬರೆದಿದೆ? ನೀನು ಅದನ್ನು ಹೇಗೆ ಓದುತ್ತೀ?” ಎಂದು ಕೇಳಿದರು.</verse>
				<verse number="27">ಅದಕ್ಕೆ ಅವನು ಉತ್ತರವಾಗಿ, “ ‘ನೀನು ನಿನ್ನ ದೇವರಾದ ಕರ್ತದೇವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು,’ ಮತ್ತು ‘ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನು ಪ್ರೀತಿಸಬೇಕು,’ ” ಎಂದನು.</verse>
				<verse number="28">ಆಗ ಯೇಸು ಅವನಿಗೆ, “ನೀನು ಸರಿಯಾಗಿ ಉತ್ತರಕೊಟ್ಟೆ, ಅದರಂತೆಯೇ ಮಾಡು, ಆಗ ನೀನು ಬದುಕುವೆ,” ಎಂದರು.</verse>
				<verse number="29">ಆದರೆ ಅವನು ತಾನೇ ನೀತಿವಂತನೆಂದು ತೋರಿಸುವುದಕ್ಕೆ, ಅಪೇಕ್ಷೆಯುಳ್ಳವನಾಗಿ ಯೇಸುವಿಗೆ, “ನನ್ನ ನೆರೆಯವನು ಯಾರು?” ಎಂದು ಕೇಳಿದನು.</verse>
				<verse number="30">ಆಗ ಯೇಸು: “ಒಬ್ಬ ಮನುಷ್ಯನು ಯೆರೂಸಲೇಮಿನಿಂದ ಯೆರಿಕೋವಿಗೆ ಪ್ರಯಾಣ ಮಾಡುತ್ತಿದ್ದಾಗ, ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನ ವಸ್ತ್ರಗಳನ್ನು ಕಿತ್ತುಕೊಂಡು, ಅವನನ್ನು ಗಾಯಮಾಡಿ, ಅರೆಜೀವ ಮಾಡಿಬಿಟ್ಟು ಹೊರಟು ಹೋದರು.</verse>
				<verse number="31">ಆಗ ಒಬ್ಬ ಯಾಜಕನು ಅದೇ ಮಾರ್ಗವಾಗಿ ಬಂದು ಅವನನ್ನು ಕಂಡು, ದಾರಿಯ ಬೇರೆ ಕಡೆಹೋದನು.</verse>
				<verse number="32">ಅದೇ ಪ್ರಕಾರ ಒಬ್ಬ ಲೇವಿಯೂ ಆ ಸ್ಥಳಕ್ಕೆ ಬಂದು ಅವನನ್ನು ಕಂಡು, ದಾರಿಯ ಬೇರೆ ಕಡೆಹೋದನು.</verse>
				<verse number="33">ಆದರೆ ಒಬ್ಬ ಸಮಾರ್ಯದವನು, ಪ್ರಯಾಣ ಮಾಡುತ್ತಾ ಅವನಿದ್ದಲ್ಲಿಗೆ ಬಂದನು; ಅವನನ್ನು ಕಂಡು, ಕನಿಕರಪಟ್ಟು,</verse>
				<verse number="34">ಅವನ ಬಳಿಗೆ ಹೋಗಿ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು, ಅವನ ಗಾಯಗಳನ್ನು ಕಟ್ಟಿ ತನ್ನ ಸ್ವಂತ ವಾಹಕಪಶುವಿನ ಮೇಲೆ ಕುಳ್ಳಿರಿಸಿ, ವಸತಿಗೃಹಕ್ಕೆ ತಂದು ಅವನನ್ನು ಆರೈಕೆ ಮಾಡಿದನು.</verse>
				<verse number="35">ಮರುದಿವಸ ಅವನು ಹೊರಟು ಹೋಗುತ್ತಿದ್ದಾಗ ಎರಡು ಬೆಳ್ಳಿ ನಾಣ್ಯವನ್ನು ತೆಗೆದು ಛತ್ರದ ಯಜಮಾನನಿಗೆ ಕೊಟ್ಟು ಅವನಿಗೆ, ‘ಇವನನ್ನು ಆರೈಕೆ ಮಾಡು, ನೀನು ಏನಾದರೂ ಹೆಚ್ಚು ವೆಚ್ಚಮಾಡಿದರೆ, ನಾನು ತಿರುಗಿ ಬರುವಾಗ ಕೊಟ್ಟು ತೀರಿಸುತ್ತೇನೆ,’ ಎಂದನು.</verse>
				<verse number="36">“ಈಗ ಆ ಕಳ್ಳರ ಕೈಗೆ ಸಿಕ್ಕಿಬಿದ್ದವನಿಗೆ ಈ ಮೂವರಲ್ಲಿ ಯಾರು ನೆರೆಯವನೆಂದು ನಿನಗೆ ತೋರುತ್ತದೆ?” ಎಂದು ಯೇಸು ಕೇಳಿದರು.</verse>
				<verse number="37">ಅದಕ್ಕೆ ನಿಯಮ ಪಂಡಿತನು, “ಯಾವನು ಅವನ ಮೇಲೆ ಕನಿಕರ ತೋರಿಸಿದನೋ ಅವನೇ ನಿನ್ನ ನೆರೆಯವನು,” ಎಂದನು. ಆಗ ಯೇಸು ಅವನಿಗೆ, “ಹೋಗು, ನೀನೂ ಅದರಂತೆಯೇ ಮಾಡು,” ಎಂದು ಹೇಳಿದರು.</verse>
				<verse number="38">ಯೇಸು ಮತ್ತು ಅವರ ಶಿಷ್ಯರು ಸಂಚಾರಮಾಡುತ್ತಾ, ಒಂದು ಹಳ್ಳಿಗೆ ಬಂದರು, ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಅವರನ್ನು ತನ್ನ ಮನೆಯೊಳಗೆ ಸ್ವೀಕರಿಸಿಕೊಂಡಳು.</verse>
				<verse number="39">ಆಕೆಗೆ ಮರಿಯಳೆಂಬ ಒಬ್ಬ ಸಹೋದರಿ ಇದ್ದಳು, ಆಕೆಯು ಕರ್ತದೇವರ ಪಾದಗಳ ಬಳಿಯಲ್ಲಿ ಕುಳಿತು ಅವರ ವಾಕ್ಯವನ್ನು ಕೇಳುತ್ತಿದ್ದಳು.</verse>
				<verse number="40">ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಅವರ ಬಳಿಗೆ ಬಂದು, “ಕರ್ತದೇವರೇ, ಕೆಲಸ ಮಾಡುವುದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವುದು ನಿಮಗೆ ಚಿಂತೆಯಿಲ್ಲವೋ? ನನಗೆ ಸಹಾಯಮಾಡುವುದಕ್ಕಾಗಿ ಅವಳಿಗೆ ಹೇಳಿರಿ!” ಎಂದಳು.</verse>
				<verse number="41">ಅದಕ್ಕೆ ಕರ್ತದೇವರು ಪ್ರತ್ಯುತ್ತರವಾಗಿ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತಿಸಿ ತೊಂದರೆಗೆ ಒಳಗಾಗಿದ್ದೀ,</verse>
				<verse number="42">ಆದರೆ ಬೇಕಾದದ್ದು ಕೆಲವೇ, ಅವಶ್ಯವಾಗಿರುವುದು. ಮರಿಯಳು ಆ ಉತ್ತಮ ಭಾಗವನ್ನೇ ಆರಿಸಿಕೊಂಡಿದ್ದಾಳೆ ಅದು ಆಕೆಯಿಂದ ಯಾರೂ ತೆಗೆಯಲಾಗುವುದಿಲ್ಲ,” ಎಂದು ಹೇಳಿದರು.</verse>
			</chapter>
			<chapter number="11">
				<verse number="1">ಯೇಸು ಒಂದು ಸ್ಥಳದಲ್ಲಿ ಪ್ರಾರ್ಥನೆಮಾಡಿ ಮುಗಿಸಿದ ಮೇಲೆ, ಅವರ ಶಿಷ್ಯರಲ್ಲಿ ಒಬ್ಬನು ಅವರಿಗೆ, “ಕರ್ತದೇವರೇ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆಯೇ ನಮಗೂ ಪ್ರಾರ್ಥನೆಮಾಡುವುದಕ್ಕೆ ಕಲಿಸಿರಿ,” ಎಂದು ಕೇಳಿದನು.</verse>
				<verse number="2">ಯೇಸು ಅವರಿಗೆ, “ನೀವು ಪ್ರಾರ್ಥನೆ ಮಾಡುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ, “ಪರಲೋಕದಲ್ಲಿರುವ ನಮ್ಮ ತಂದೆಯೇ, ನಿಮ್ಮ ನಾಮವು ಪರಿಶುದ್ಧವೆಂದು ಎಣಿಕೆಯಾಗಿರಲಿ, ನಿಮ್ಮ ರಾಜ್ಯವು ಬರಲಿ. ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.</verse>
				<verse number="3">ನಮ್ಮ ಅನುದಿನದ ಆಹಾರವನ್ನು ನಮಗೆ ಪ್ರತಿದಿನವೂ ದಯಪಾಲಿಸಿರಿ.</verse>
				<verse number="4">ನಮಗೆ ಪಾಪಮಾಡಿದವರನ್ನು, ನಾವು ಕ್ಷಮಿಸಿದಂತೆಯೇ ನಮ್ಮ ಪಾಪಗಳನ್ನು ಕ್ಷಮಿಸಿರಿ. ನಮ್ಮನ್ನು ಶೋಧನೆಯೊಳಗೆ ಸೇರಿಸದೆ, ಕೇಡಿನಿಂದ ನಮ್ಮನ್ನು ತಪ್ಪಿಸಿ.”</verse>
				<verse number="5">ಯೇಸು ಅವರಿಗೆ, “ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಸ್ನೇಹಿತನಿರಲಾಗಿ, ಮಧ್ಯರಾತ್ರಿಯಲ್ಲಿ ಅವನ ಬಳಿಗೆ ಹೋಗಿ ಅವನಿಗೆ, ‘ಸ್ನೇಹಿತನೇ, ಮೂರು ರೊಟ್ಟಿಗಳನ್ನು ನನಗೆ ಸಾಲವಾಗಿ ಕೊಡು;</verse>
				<verse number="6">ಏಕೆಂದರೆ ನನ್ನ ಒಬ್ಬ ಸ್ನೇಹಿತನು ಪ್ರಯಾಣಮಾಡಿ ನನ್ನ ಬಳಿಗೆ ಬಂದಿದ್ದಾನೆ, ಅವನಿಗೆ ಬಡಿಸುವುದಕ್ಕೆ ನನ್ನಲ್ಲಿ ಏನೂ ಇಲ್ಲ,’ ಎಂದು ಕೇಳಲು</verse>
				<verse number="7">ಅವನು ಒಳಗಿನಿಂದಲೇ ಇವನಿಗೆ ಉತ್ತರವಾಗಿ, ‘ನನ್ನನ್ನು ತೊಂದರೆಪಡಿಸಬೇಡ. ಬಾಗಿಲು ಈಗ ಮುಚ್ಚಿದೆ, ಹಾಸಿಗೆಯಲ್ಲಿ ನನ್ನ ಮಕ್ಕಳು ನನ್ನ ಜೊತೆ ಮಲಗಿದ್ದಾರೆ. ನಾನೆದ್ದು ಕೊಡಲಾರೆನು,’ ಎಂದು ಹೇಳುವನು.</verse>
				<verse number="8">ಆದರೆ ನಾನು ನಿಮಗೆ ಹೇಳುವುದೇನೆಂದರೆ, ಅವನು ಸ್ನೇಹಿತನಾಗಿರುವುದರಿಂದ ಎದ್ದು ಇವನಿಗೆ ಕೊಡದೆಹೋದರೂ ಮೇಲಿಂದ ಮೇಲೆ ನಾಚಿಕೆಪಡದೆ ಬೇಡುವುದರಿಂದ ಎದ್ದು ಇವನಿಗೆ ಬೇಕಾದಷ್ಟು ಕೊಡುವನು.</verse>
				<verse number="9">“ಕೇಳಿಕೊಳ್ಳಿರಿ ನಿಮಗೆ ಕೊಡಲಾಗುವುದು; ಹುಡುಕಿರಿ ನಿಮಗೆ ಸಿಗುವುದು; ತಟ್ಟಿರಿ ನಿಮಗೆ ಬಾಗಿಲು ತೆರೆಯಲಾಗುವುದು.</verse>
				<verse number="10">ಬೇಡಿಕೊಳ್ಳುವ ಪ್ರತಿಯೊಬ್ಬರು ಪಡೆದುಕೊಳ್ಳುವರು; ಹುಡುಕುವವರಿಗೆ ಸಿಗುವುದು; ತಟ್ಟುವವರಿಗೆ ಬಾಗಿಲು ತೆರೆಯಲಾಗುವುದು.</verse>
				<verse number="11">“ನಿಮ್ಮಲ್ಲಿ ತಂದೆಯಾಗಿರುವಾತನು, ತನ್ನ ಮಗನು ರೊಟ್ಟಿಯನ್ನು ಕೇಳಿದರೆ ಮಗನಿಗೆ ಕಲ್ಲನ್ನು ಕೊಡುವನೇ, ಮೀನನ್ನು ಕೇಳಿದರೆ, ಮೀನಿಗೆ ಬದಲಾಗಿ ಹಾವನ್ನು ಕೊಡುವನೇ?</verse>
				<verse number="12">ಇಲ್ಲವೆ ಮೊಟ್ಟೆಯನ್ನು ಕೇಳಿದರೆ, ಅವನಿಗೆ ಚೇಳನ್ನು ಕೊಡುವನೇ?</verse>
				<verse number="13">ಹಾಗಾದರೆ ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತಮ್ಮನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮರನ್ನು ದಯಪಾಲಿಸುವರಲ್ಲವೇ!” ಎಂದು ನಾನು ನಿಮಗೆ ಹೇಳುತ್ತೇನೆ ಎಂದರು.</verse>
				<verse number="14">ಯೇಸು ಒಂದು ಮೂಕದೆವ್ವವನ್ನು ಹೊರಗೆ ಓಡಿಸುತ್ತಿದ್ದರು. ಆ ದೆವ್ವವು ಹೊರಟುಹೋದ ಮೇಲೆ, ಆ ಮೂಕನು ಮಾತನಾಡಿದನು. ಅದಕ್ಕೆ ಜನರು ಆಶ್ಚರ್ಯಪಟ್ಟರು.</verse>
				<verse number="15">ಆದರೆ ಅವರಲ್ಲಿ ಕೆಲವರು, “ದೆವ್ವಗಳ ಅಧಿಪತಿಯಾದ ಬೆಲ್ಜೆಬೂಲನಿಂದ ಈತನು ದೆವ್ವಗಳನ್ನು ಓಡಿಸುತ್ತಾನೆ,” ಎಂದರು.</verse>
				<verse number="16">ಇನ್ನು ಕೆಲವರು ಯೇಸುವನ್ನು ಪರೀಕ್ಷಿಸುವವರಾಗಿ ಪರಲೋಕದಿಂದ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಕೇಳಿದರು.</verse>
				<verse number="17">ಆದರೆ ಯೇಸು ಅವರ ಆಲೋಚನೆಗಳನ್ನು ತಿಳಿದು: “ತನಗೆ ತಾನೇ ವಿರೋಧವಾಗಿ ವಿಭಾಗಗೊಂಡರೆ ಪ್ರತಿಯೊಂದು ರಾಜ್ಯವು ನಾಶವಾಗುವುದು, ಒಂದು ಮನೆಯು ತನಗೆ ತಾನೇ ವಿರೋಧವಾಗಿ ವಿಭಾಗವಾದರೆ, ಅದು ಬಿದ್ದುಹೋಗುವುದು.</verse>
				<verse number="18">ಸೈತಾನನು ಸಹ ತನಗೆ ತಾನೇ ವಿರೋಧವಾಗಿ ತನ್ನಲ್ಲಿ ವಿಭಾಗವಾದರೆ, ಅವನ ರಾಜ್ಯವು ನಿಲ್ಲುವುದು ಹೇಗೆ? ಏಕೆಂದರೆ ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಓಡಿಸುತ್ತೇನೆಂದು ನೀವು ಹೇಳುತ್ತೀರಲ್ಲಾ.</verse>
				<verse number="19">ನಾನು ಬೆಲ್ಜೆಬೂಲನಿಂದ ದೆವ್ವಗಳನ್ನು ಓಡಿಸುವುದಾದರೆ, ನಿಮ್ಮ ಪುತ್ರರು ಯಾರಿಂದ ಅವುಗಳನ್ನು ಓಡಿಸುತ್ತಾರೆ? ಆದ್ದರಿಂದ, ನಿಮ್ಮವರೇ ನಿಮಗೆ ನ್ಯಾಯಾಧಿಪತಿಗಳಾಗಿರುವರು.</verse>
				<verse number="20">ನಾನು ದೇವರ ಬಲದಿಂದಲೇ ದೆವ್ವಗಳನ್ನು ಓಡಿಸುವುದಾದರೆ, ದೇವರ ರಾಜ್ಯವು ನಿಸ್ಸಂದೇಹವಾಗಿ ನಿಮ್ಮ ಬಳಿಗೆ ಬಂದಿದೆಯಲ್ಲಾ.</verse>
				<verse number="21">“ಆಯುಧಗಳನ್ನು ಧರಿಸಿಕೊಂಡು, ಬಲಿಷ್ಠನಾದವನೊಬ್ಬನು ತನ್ನ ಮನೆಯನ್ನು ಕಾಯುವುದಾದರೆ ಅವನ ಸೊತ್ತು ಸುರಕ್ಷಿತವಾಗಿರುವುದು.</verse>
				<verse number="22">ಆದರೆ ಅವನಿಗಿಂತ ಬಲಿಷ್ಠನು ಅವನ ಮೇಲೆ ಬಂದು ಅವನನ್ನು ಜಯಿಸಿ, ಅವನು ಭರವಸೆಯಿಟ್ಟಿದ್ದ ಆಯುಧಗಳನ್ನು ಅವನಿಂದ ತೆಗೆದುಕೊಂಡು ತನ್ನ ಸುಲಿಗೆಯನ್ನೆಲ್ಲಾ ಹಂಚುವನು.</verse>
				<verse number="23">“ನನ್ನ ಪರವಾಗಿ ಇರದವನು ನನಗೆ ವಿರೋಧಿಯಾಗಿದ್ದಾನೆ, ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.</verse>
				<verse number="24">“ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ, ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ಹುಡುಕಾಡಿದರೂ ಅದನ್ನು ಕಂಡುಕೊಳ್ಳದೆ ಅದು, ‘ನಾನು ಹೊರಟು ಬಂದ ನನ್ನ ಮನೆಗೆ ಹಿಂದಿರುಗುವೆನು,’ ಎಂದು ಹೇಳಿಕೊಂಡು ಬಂದು,</verse>
				<verse number="25">ಅದು ಬಂದು ಆ ಮನೆಯು ಗುಡಿಸಿ ಅಲಂಕರಿಸಿರುವುದನ್ನು ಕಾಣುತ್ತದೆ.</verse>
				<verse number="26">ಆ ಅಶುದ್ಧಾತ್ಮವು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ಅಶುದ್ಧಾತ್ಮಗಳನ್ನು ತನ್ನೊಂದಿಗೆ ಕರೆದುಕೊಂಡು ಅವನ ಒಳಗೆ ಸೇರಿ ಅಲ್ಲಿ ವಾಸಮಾಡುತ್ತವೆ. ಹೀಗೆ ಆ ಮನುಷ್ಯನ ಕಡೆಯ ಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು,” ಎಂದರು.</verse>
				<verse number="27">ಯೇಸು ಈ ಸಂಗತಿಗಳನ್ನು ಹೇಳುತ್ತಿದ್ದಾಗ, ಆ ಗುಂಪಿನಲ್ಲಿದ್ದ ಒಬ್ಬ ಸ್ತ್ರೀಯು ತನ್ನ ಸ್ವರವನ್ನೆತ್ತಿ ಅವರಿಗೆ, “ನಿಮ್ಮನ್ನು ಗರ್ಭದಲ್ಲಿ ಹೊತ್ತು, ನಿಮಗೆ ಹಾಲುಣಿಸಿದ ತಾಯಿ ಧನ್ಯಳು,” ಎಂದು ಹೇಳಿದಳು.</verse>
				<verse number="28">ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವರು ಹೆಚ್ಚು ಭಾಗ್ಯವಂತರು,” ಎಂದರು.</verse>
				<verse number="29">ಜನರು ಗುಂಪುಗುಂಪಾಗಿ ಕೂಡಿಬಂದಿದ್ದಾಗ, ಯೇಸು, “ಇದು ದುಷ್ಟ ಸಂತತಿಯು. ಇದು ಸೂಚಕಕಾರ್ಯವನ್ನು ಹುಡುಕುತ್ತದೆ, ಪ್ರವಾದಿ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ದೊರಕದು.</verse>
				<verse number="30">ಏಕೆಂದರೆ ಯೋನನು ನಿನೆವೆ ಪಟ್ಟಣದವರಿಗೆ ಸೂಚನೆಯಾಗಿದ್ದಂತೆಯೇ, ಮನುಷ್ಯಪುತ್ರನಾದ ನಾನೇ ಈ ಸಂತತಿಗೆ ಸೂಚನೆಯಾಗಿರುವೆನು.</verse>
				<verse number="31">ನ್ಯಾಯತೀರ್ಪಿನಲ್ಲಿ ದಕ್ಷಿಣದ ರಾಣಿಯು ಈ ಸಂತತಿಗೆ ಎದುರಾಗಿ ಎದ್ದು ಇವರನ್ನು ಅಪರಾಧಿಗಳೆಂದು ತೀರ್ಪುಮಾಡುವಳು. ಏಕೆಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವುದಕ್ಕಾಗಿ ಭೂಮಿಯ ಕಟ್ಟಕಡೆಯಿಂದ ಬಂದಳು. ಇಗೋ, ಇಲ್ಲಿ ಸೊಲೊಮೋನನಿಗಿಂತಲೂ ತುಂಬಾ ದೊಡ್ಡವನು ಇಲ್ಲಿದ್ದಾನೆ.</verse>
				<verse number="32">ನಿನೆವೆ ಪಟ್ಟಣದವರು ನ್ಯಾಯತೀರ್ಪಿನಲ್ಲಿ ಈ ಸಂತತಿಗೆ ಎದುರಾಗಿ ಎದ್ದು ಇದನ್ನು ಅಪರಾಧ ಎಂದು ತೀರ್ಪುಮಾಡುವರು, ಏಕೆಂದರೆ ಯೋನನು ಸಾರಿದ್ದನ್ನು ಕೇಳಿ ಅವರು ದೇವರ ಕಡೆಗೆ ತಿರುಗಿಕೊಂಡರು; ಇಗೋ, ಇಲ್ಲಿ ಯೋನನಿಗಿಂತಲೂ ತುಂಬಾ ದೊಡ್ಡವನು ಇದ್ದಾನೆ,” ಎಂದು ಹೇಳಿದರು.</verse>
				<verse number="33">“ಯಾರೂ ದೀಪವನ್ನು ಹಚ್ಚಿ ಮರೆಯಾದ ಸ್ಥಳದಲ್ಲಾಗಲಿ ಬಟ್ಟಲ ಕೆಳಗಾಗಲಿ ಇಡುವುದಿಲ್ಲ. ಮನೆಯೊಳಕ್ಕೆ ಬರುವವರಿಗೆ, ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.</verse>
				<verse number="34">ನಿನ್ನ ಕಣ್ಣು ದೇಹಕ್ಕೆ ದೀಪವಾಗಿದೆ. ಆದ್ದರಿಂದ ನಿನ್ನ ಕಣ್ಣು ಒಳ್ಳೆಯದಾಗಿದ್ದರೆ, ನಿನ್ನ ದೇಹವೆಲ್ಲಾ ಬೆಳಕಾಗಿರುವುದು. ಕಣ್ಣು ಕೆಟ್ಟದ್ದಾಗಿದ್ದರೆ, ನಿನ್ನ ದೇಹವು ಸಹ ಕತ್ತಲೆಯಾಗಿರುವುದು.</verse>
				<verse number="35">ಆದ್ದರಿಂದ, ನಿನ್ನಲ್ಲಿರುವ ಬೆಳಕು ಕತ್ತಲೆಯಾಗದಂತೆ ನೋಡಿಕೋ.</verse>
				<verse number="36">ದೇಹದ ಯಾವುದೊಂದು ಭಾಗದಲ್ಲಿಯೂ ಕತ್ತಲೆಯಾಗಿರದೆ, ನಿನ್ನ ದೇಹವೆಲ್ಲವೂ ಪೂರ್ಣವಾಗಿ ಬೆಳಕಾಗಿರುವುದಾದರೆ, ಪ್ರಕಾಶಮಾನವಾದ ದೀಪವು ನಿನಗೆ ಬೆಳಕುಕೊಡುವಂತೆ ಸಮಸ್ತವೂ ಬೆಳಕಾಗಿರುವುದು,” ಎಂದು ಹೇಳಿದರು.</verse>
				<verse number="37">ಯೇಸು ಮಾತನಾಡುವುದನ್ನು ಮುಗಿಸಿದಾಗ, ಒಬ್ಬ ಫರಿಸಾಯನು ತನ್ನೊಂದಿಗೆ ಊಟ ಮಾಡಬೇಕೆಂದು ಯೇಸುವನ್ನು ಬೇಡಿಕೊಂಡನು, ಆಗ ಅವರು ಒಳಗೆ ಹೋಗಿ ಊಟಕ್ಕೆ ಕೂತುಕೊಂಡರು.</verse>
				<verse number="38">ಆದರೆ ಊಟಕ್ಕೆ ಮೊದಲು ಯೇಸು ಕೈತೊಳೆಯದೆ ಇರುವುದನ್ನು ಫರಿಸಾಯನು ಕಂಡು ಆಶ್ಚರ್ಯಪಟ್ಟನು.</verse>
				<verse number="39">ಆಗ ಕರ್ತದೇವರು ಅವನಿಗೆ, “ಫರಿಸಾಯರಾದ ನೀವು, ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ, ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.</verse>
				<verse number="40">ಮೂರ್ಖರೇ! ಹೊರಭಾಗವನ್ನು ಮಾಡಿದಾತನು ಒಳಭಾಗವನ್ನು ಸಹ ಮಾಡಿದನಲ್ಲವೇ?</verse>
				<verse number="41">ನೀವು ನಿಮ್ಮೊಳಗೆ ಅಂಟಿಕೊಂಡಿರುವವುಗಳನ್ನು ಬಡವರಿಗೆ ದಾನ ಮಾಡಿಬಿಡಿರಿ, ಆಗ ನಿಮಗೆ ಎಲ್ಲವೂ ಶುದ್ಧವಾಗಿರುವುವು.</verse>
				<verse number="42">“ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ಪುದೀನ, ಸದಾಪು ಮತ್ತು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು, ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಅವುಗಳನ್ನು ಮಾಡಿದ ನೀವು ಇವುಗಳನ್ನೂ ಅವಶ್ಯವಾಗಿ ಮಾಡಬೇಕಾಗಿತ್ತು.</verse>
				<verse number="43">“ಫರಿಸಾಯರೇ, ನಿಮಗೆ ಕಷ್ಟ, ಏಕೆಂದರೆ ನೀವು ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ ಇಷ್ಟಪಡುತ್ತೀರಿ.</verse>
				<verse number="44">“ನಿಮಗೆ ಕಷ್ಟ, ಏಕೆಂದರೆ ನೀವು ನೆಲಸಮವಾದ ಸಮಾಧಿಗಳಂತೆ ಇದ್ದೀರಿ, ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು,” ಎಂದು ಹೇಳಿದರು.</verse>
				<verse number="45">ನಿಯಮ ಬೋಧಕ ಒಬ್ಬನು ಯೇಸುವಿಗೆ, “ಬೋಧಕರೇ, ನೀವು ಇವುಗಳನ್ನು ಹೇಳುವುದರಿಂದ ನಮ್ಮನ್ನು ಸಹ ಅವಮಾನಪಡಿಸುತ್ತೀರಿ,” ಎಂದನು.</verse>
				<verse number="46">ಅದಕ್ಕೆ ಯೇಸು, “ನಿಯಮ ಪಂಡಿತರೇ, ನಿಮಗೂ ಕಷ್ಟ, ಏಕೆಂದರೆ ಹೊರಲಾಗದ ಹೊರೆಗಳನ್ನು ಮನುಷ್ಯರ ಮೇಲೆ ಹೊರಿಸುತ್ತೀರಿ, ನೀವಾದರೋ ಈ ಹೊರೆಗಳನ್ನು ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ಮುಟ್ಟುವುದಿಲ್ಲ.</verse>
				<verse number="47">“ನಿಮಗೆ ಕಷ್ಟ, ಏಕೆಂದರೆ ನಿಮ್ಮ ಪಿತೃಗಳು ಪ್ರವಾದಿಗಳನ್ನು ಕೊಂದರು, ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ.</verse>
				<verse number="48">ಇದರಿಂದ ನಿಜವಾಗಿಯೂ ನಿಮ್ಮ ಪಿತೃಗಳ ಕೃತ್ಯಗಳನ್ನು ನೀವು ಒಪ್ಪಿಕೊಳ್ಳುವಂತೆ ಸಾಕ್ಷಿಕರಿಸುತ್ತೀರಿ; ಏಕೆಂದರೆ ಅವರು ನಿಜವಾಗಿಯೂ ಪ್ರವಾದಿಗಳನ್ನು ಕೊಂದರು, ನೀವೋ ಅವರ ಸಮಾಧಿಗಳನ್ನು ಕಟ್ಟುತ್ತೀರಿ.</verse>
				<verse number="49">ಈ ಕಾರಣದಿಂದ, ದೇವರ ಜ್ಞಾನವು ಸಹ ಹೇಳಿರುವುದೇನೆಂದರೆ, ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸುವೆನು, ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸೆಪಡಿಸುವರು.’</verse>
				<verse number="50">ಹೀಗೆ ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಲೆಕ್ಕ ಕೊಡಬೇಕಾಗಿರುವುದು,</verse>
				<verse number="51">ಹೇಬೆಲನ ರಕ್ತ ಮೊದಲುಗೊಂಡು ಬಲಿಪೀಠಕ್ಕೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು. ಹೌದು, ಈ ಸಂತತಿಯವರೇ ಇದಕ್ಕೆಲ್ಲಾ ಉತ್ತರಕೊಡಬೇಕೆಂದು, ನಾನು ನಿಮಗೆ ನಿಜವಾಗಿ ಹೇಳುತ್ತೇನೆ.</verse>
				<verse number="52">“ನಿಯಮ ಪಂಡಿತರೇ, ನಿಮಗೆ ಕಷ್ಟ, ಏಕೆಂದರೆ ನೀವು ಜ್ಞಾನದ ಬೀಗದ ಕೈಯನ್ನು ತೆಗೆದುಕೊಂಡಿದ್ದೀರಿ. ನೀವಂತೂ ಒಳಗೆ ಪ್ರವೇಶಿಸಲಿಲ್ಲ; ಒಳಗೆ ಪ್ರವೇಶಿಸುತ್ತಿರುವವರಿಗೂ ನೀವು ತಡೆಗಟ್ಟುತ್ತೀರಿ,” ಎಂದು ಹೇಳಿದರು.</verse>
				<verse number="53">ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ, ನಿಯಮ ಬೋಧಕರೂ ಫರಿಸಾಯರೂ ಕೋಪಾವೇಶವುಳ್ಳವರಾಗಿ, ಯೇಸು ಇನ್ನೂ ಹೆಚ್ಚು ವಿಷಯಗಳನ್ನು ಮಾತನಾಡುವಂತೆ ಅವರನ್ನು ಕೆಣಕಿದರು,</verse>
				<verse number="54">ಏಕೆಂದರೆ ಯೇಸುವಿನ ಮಾತಿನಲ್ಲಿ ಏನನ್ನಾದರೂ ಕಂಡುಹಿಡಿದು ಅವರ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡುತ್ತಿದ್ದರು.</verse>
			</chapter>
			<chapter number="12">
				<verse number="1">ಅಷ್ಟರಲ್ಲಿ, ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿದಾಡುವಷ್ಟು ಕಿಕ್ಕಿರಿದು ಬಂದಿರಲಾಗಿ, ಯೇಸು ಮೊದಲು ತಮ್ಮ ಶಿಷ್ಯರಿಗೆ ಹೀಗೆಂದು ಮಾತನಾಡಲಾರಂಭಿಸಿದರು, “ಫರಿಸಾಯರ ಹುಳಿಹಿಟ್ಟಿನ ಬಗ್ಗೆ ಅಂದರೆ, ಕಪಟತನದ ಬಗ್ಗೆ ನೀವು ಎಚ್ಚರವಾಗಿರಿ.</verse>
				<verse number="2">ಪ್ರಕಟವಾಗದಂತೆ ಯಾವುದೂ ಮರೆಯಾಗಿರುವುದಿಲ್ಲ, ತಿಳಿಯಲಾಗದಂತೆ ಯಾವುದೂ ಗುಪ್ತವಾಗಿರುವುದಿಲ್ಲ.</verse>
				<verse number="3">ಆದ್ದರಿಂದ ನೀವು ಕತ್ತಲೆಯಲ್ಲಿ ಯಾವುದನ್ನು ಹೇಳಿದ್ದೀರೋ ಅದು ಬೆಳಕಿನಲ್ಲಿ ಕೇಳಲಾಗುವುದು, ಕೋಣೆಗಳೊಳಗೆ ನೀವು ಪಿಸುಗುಟ್ಟಿದ್ದು ಮಾಳಿಗೆಗಳ ಮೇಲೆ ಸಾರಲಾಗುವುದು.</verse>
				<verse number="4">“ನನ್ನ ಸ್ನೇಹಿತರೇ, ದೇಹವನ್ನು ಕೊಂದು, ಅದಕ್ಕಿಂತ ಹೆಚ್ಚೇನೂ ಮಾಡಲಾರದವರಿಗೆ ಹೆದರಬೇಡಿರಿ ಎಂದು ನಿಮಗೆ ಹೇಳುತ್ತೇನೆ.</verse>
				<verse number="5">ಆದರೆ ಯಾರಿಗೆ ನೀವು ಭಯಪಡಬೇಕೆಂದು ನಾನು ನಿಮಗೆ ತೋರಿಸುತ್ತೇನೆ: ನಿಮ್ಮ ದೇಹವನ್ನು ಕೊಂದ ಮೇಲೆ, ನರಕದಲ್ಲಿ ಹಾಕುವುದಕ್ಕೆ ಅಧಿಕಾರವಿರುವ ದೇವರಿಗೆ ಭಯಪಡಿರಿ. ಹೌದು, ದೇವರಿಗೇ ಭಯಪಡಿರಿ, ಎಂದು ನಾನು ನಿಮಗೆ ಹೇಳುತ್ತೇನೆ.</verse>
				<verse number="6">ಎರಡು ರೂಪಾಯಿಗಳಿಗೆ ಐದು ಗುಬ್ಬಿಗಳನ್ನು ಮಾರುವುದಿಲ್ಲವೇ? ಆದರೂ ಅವುಗಳಲ್ಲಿ ಒಂದನ್ನೂ ದೇವರು ಮರೆಯುವುದಿಲ್ಲ.</verse>
				<verse number="7">ನಿಮ್ಮ ತಲೆಯ ಕೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿರಿ; ಅನೇಕ ಗುಬ್ಬಿಗಳಿಗಿಂತಲೂ ನೀವು ಎಷ್ಟೋ ಮೌಲ್ಯವುಳ್ಳವರು.</verse>
				<verse number="8">“ಆದರೆ ನಾನು ನಿಮಗೆ ಹೇಳುವುದೇನೆಂದರೆ, ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಳ್ಳುವ ಪ್ರತಿಯೊಬ್ಬರನ್ನು, ಮನುಷ್ಯಪುತ್ರನಾದ ನಾನು ಸಹ ದೇವದೂತರ ಮುಂದೆ ನನ್ನವರೆಂದು ಒಪ್ಪಿಕೊಳ್ಳುವೆನು.</verse>
				<verse number="9">ಆದರೆ ಯಾರು ಜನರ ಮುಂದೆ ನನ್ನನ್ನು ಅಲ್ಲಗಳೆಯುವರೋ ಅವರನ್ನು ದೇವದೂತರ ಮುಂದೆ ನಾನು ಅಲ್ಲಗಳೆಯುವೆನು.</verse>
				<verse number="10">ಮನುಷ್ಯಪುತ್ರನಾದ ನನಗೆ ವಿರೋಧವಾಗಿ ಮಾತನಾಡುವ ಪ್ರತಿಯೊಬ್ಬರಿಗೂ ಕ್ಷಮಾಪಣೆಯಾಗುವುದು, ಆದರೆ ಪವಿತ್ರಾತ್ಮರಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದಕ್ಕೆ ಕ್ಷಮಾಪಣೆಯಿಲ್ಲ.</verse>
				<verse number="11">“ಜನರು ನಿಮ್ಮನ್ನು ಸಭಾಮಂದಿರಗಳಿಗೂ ಆಳುವವರ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವುದನ್ನು ಕುರಿತು ಉತ್ತರಕೊಡಬೇಕೆಂದು, ಇಲ್ಲವೆ ಏನು ಹೇಳಬೇಕೆಂದು ಚಿಂತಿಸಬೇಡಿರಿ,</verse>
				<verse number="12">ಆ ಸಮಯದಲ್ಲಿ ನೀವು ಹೇಳಬೇಕಾದದ್ದನ್ನು ಪವಿತ್ರಾತ್ಮರು ನಿಮಗೆ ಕಲಿಸಿಕೊಡುವರು.”</verse>
				<verse number="13">ಗುಂಪಿನಲ್ಲಿದ್ದ ಒಬ್ಬನು ಯೇಸುವಿಗೆ, “ಬೋಧಕರೇ, ಆಸ್ತಿಯನ್ನು ಭಾಗಮಾಡಿ ನನಗೆ ಕೊಡುವಂತೆ ನನ್ನ ಸಹೋದರನಿಗೆ ಹೇಳಿ,” ಎಂದನು.</verse>
				<verse number="14">ಯೇಸು, “ಸ್ನೇಹಿತನೇ, ನಿಮ್ಮ ಮೇಲೆ ನ್ಯಾಯಾಧಿಪತಿಯಾಗಿ ಇಲ್ಲವೆ ನಿಮಗೆ ಭಾಗಮಾಡಿಕೊಡುವುದಕ್ಕೆ ನನ್ನನ್ನು ನೇಮಿಸಿದವರು ಯಾರು?” ಎಂದು ಹೇಳಿದರು.</verse>
				<verse number="15">ಅನಂತರ ಯೇಸು ಜನರಿಗೆ, “ಎಚ್ಚರಿಕೆ! ನೀವು ಎಲ್ಲಾ ಲೋಭದಿಂದ ನಿಮ್ಮನ್ನು ಕಾಪಾಡಿಕೊಳ್ಳಿರಿ; ಏಕೆಂದರೆ ಜೀವನವು ಸಮೃದ್ಧಿಯಾದ ಆಸ್ತಿಗೆ ಆಧಾರವಾದದ್ದಲ್ಲ,” ಎಂದರು.</verse>
				<verse number="16">ಅನಂತರ ಯೇಸು ಅವರಿಗೆ ಒಂದು ಸಾಮ್ಯವನ್ನು ಹೇಳಿದರು: “ಒಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆ ಕೊಟ್ಟಿತು.</verse>
				<verse number="17">ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನಗಿರುವ ಬೆಳೆಯನ್ನು ಇಡುವುದಕ್ಕೆ ನನಗೆ ಸ್ಥಳವಿಲ್ಲ,’ ಎಂದು ಆಲೋಚಿಸಿ ಹೀಗೆಂದುಕೊಂಡನು,</verse>
				<verse number="18">“ನಾನು ಹೀಗೆ ಮಾಡುತ್ತೇನೆ, ‘ನನ್ನ ಕಣಜಗಳನ್ನು ಮುರಿದು ಹಾಕಿಸಿ ಇನ್ನೂ ದೊಡ್ಡದಾಗಿ ಕಟ್ಟಿಸುತ್ತೇನೆ, ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಗಳನ್ನೂ ಕೂಡಿಸಿಟ್ಟುಕೊಳ್ಳುತ್ತೇನೆ.</verse>
				<verse number="19">ಅಲ್ಲದೆ, ನಾನು ನನ್ನ ಪ್ರಾಣಕ್ಕೆ, “ಪ್ರಾಣವೇ ಅನೇಕ ವರ್ಷಗಳಿಗಾಗಿ ನಿನಗೆ ಬಹಳ ಸರಕು ಇಡಲಾಗಿದೆ. ವಿಶ್ರಮಿಸಿಕೋ; ತಿನ್ನು, ಕುಡಿ ಮತ್ತು ಆನಂದವಾಗಿರು ಎಂದು ಹೇಳಿಕೊಳ್ಳುತ್ತೇನೆ,” ’ ಎಂದುಕೊಂಡನು.</verse>
				<verse number="20">“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ! ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ತೆಗೆದುಕೊಳ್ಳಲಾಗುವುದು. ಆಗ ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದು ಹೇಳಿದರು.</verse>
				<verse number="21">“ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತ ಆಗದಿರುವವನು ಇವನಂತೆಯೇ ಇರುವನು,” ಎಂದರು.</verse>
				<verse number="22">ಯೇಸು ತಮ್ಮ ಶಿಷ್ಯರಿಗೆ: “ಆದಕಾರಣ, ನೀವು ನಿಮ್ಮ ಜೀವನಕ್ಕಾಗಿ ಏನು ಊಟಮಾಡಬೇಕು; ಮತ್ತು ನಿಮ್ಮ ದೇಹಕ್ಕೆ ಏನು ಧರಿಸಿಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.</verse>
				<verse number="23">ಊಟಕ್ಕಿಂತ ಜೀವನವೂ ವಸ್ತ್ರಕ್ಕಿಂತ ದೇಹವೂ ಹೆಚ್ಚಿನದು.</verse>
				<verse number="24">ಕಾಗೆಗಳನ್ನು ಗಮನಿಸಿರಿ: ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಅವುಗಳಿಗೆ ಉಗ್ರಾಣವಾಗಲಿ ಕಣಜವಾಗಲಿ ಇಲ್ಲ, ಆದರೂ ದೇವರು ಅವುಗಳನ್ನು ಪೋಷಿಸುತ್ತಾರೆ. ನೀವು ಪಕ್ಷಿಗಳಿಗಿಂತ ಎಷ್ಟೋ ಮೌಲ್ಯವುಳ್ಳವರಾಗಿದ್ದೀರಲ್ಲಾ!</verse>
				<verse number="25">ನಿಮ್ಮಲ್ಲಿ ಯಾರಾದರೂ ಚಿಂತೆ ಮಾಡುವುದರಿಂದ ತಮ್ಮ ಜೀವನಾವಧಿಗೆ ಒಂದು ತಾಸನ್ನು ಕೂಡಿಸಲು ಸಾಧ್ಯವೇ?</verse>
				<verse number="26">ಅತ್ಯಲ್ಪವಾಗಿರುವುದನ್ನು ನೀವು ಮಾಡಲಾರದವರಾಗಿದ್ದರೆ, ಇತರ ವಿಷಯಗಳಿಗಾಗಿ ನೀವು ಚಿಂತೆ ಮಾಡುವುದೇನು?</verse>
				<verse number="27">“ಅಡವಿಯ ಹೂವುಗಳು ಹೇಗೆ ಬೆಳೆಯುತ್ತವೆಂದು ಯೋಚಿಸಿರಿ. ಅವು ದುಡಿಯುವುದಿಲ್ಲ, ನೂಲುವುದಿಲ್ಲ, ಆದರೂ ಅರಸನಾದ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಆ ಹೂವುಗಳಲ್ಲಿ ಒಂದರಂತೆಯಾದರೂ ಉಡುಪನ್ನು ಧರಿಸಿರಲಿಲ್ಲ ಎಂದು, ನಾನು ನಿಮಗೆ ಹೇಳುತ್ತೇನೆ.</verse>
				<verse number="28">ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಯ ಪಾಲಾಗುವ ಅಡವಿಯ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಎಷ್ಟೋ ಹೆಚ್ಚಾಗಿ ಉಡಿಸುವರಲ್ಲವೇ?</verse>
				<verse number="29">ಏನು ಊಟಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಡಬೇಡಿರಿ; ಚಿಂತೆಯೂ ಮಾಡಬೇಡಿರಿ.</verse>
				<verse number="30">ದೇವರನ್ನು ಅರಿಯದವರು ಇವೆಲ್ಲವುಗಳಿಗಾಗಿ ಬೆನ್ನಟ್ಟುತ್ತಾರೆ, ಆದರೆ ಇವುಗಳು ನಿಮಗೆ ಅಗತ್ಯವೆಂದು ನಿಮ್ಮ ತಂದೆಯು ತಿಳಿದಿದ್ದಾರೆ.</verse>
				<verse number="31">ಆದರೆ ನೀವು ದೇವರ ರಾಜ್ಯವನ್ನೇ ಹುಡುಕಿರಿ, ಆಗ ಇವೆಲ್ಲವನ್ನು ದೇವರು ನಿಮಗೆ ಕೊಡುವರು.</verse>
				<verse number="32">“ಚಿಕ್ಕ ಹಿಂಡೇ, ಭಯಪಡಬೇಡ, ಏಕೆಂದರೆ ನಿಮ್ಮ ತಂದೆಯು ತಮ್ಮ ರಾಜ್ಯವನ್ನು ನಿಮಗೆ ಕೊಡುವುದಕ್ಕೆ ಮೆಚ್ಚಿದ್ದಾರೆ.</verse>
				<verse number="33">ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ ಬಡವರಿಗೆ ಕೊಡಿರಿ. ನಿಮಗೋಸ್ಕರ ನಾಶವಾಗದ ಹಣದ ಚೀಲಗಳನ್ನೂ, ಕ್ಷಯವಾಗದ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ, ಅಲ್ಲಿ ಕಳ್ಳನು ಸಮೀಪಕ್ಕೆ ಬರುವುದಿಲ್ಲ. ನುಸಿಹಿಡಿದು ಕೆಟ್ಟುಹೋಗುವುದಿಲ್ಲ.</verse>
				<verse number="34">ನಿಮ್ಮ ಸಂಪತ್ತು ಇರುವಲ್ಲಿಯೇ, ನಿಮ್ಮ ಹೃದಯವು ಸಹ ಇರುವುದು,” ಎಂದು ಹೇಳಿದರು.</verse>
				<verse number="35">“ನೀವು ವಸ್ತ್ರ ಧರಿಸಿ ಸೇವೆಗೆ ಸಿದ್ಧರಾಗಿರಿ. ನಿಮ್ಮ ದೀಪಗಳು ಉರಿಯುತ್ತಿರಲಿ,</verse>
				<verse number="36">ನೀವಂತೂ ಮದುವೆಯ ಔತಣದಿಂದ ಹಿಂದಿರುಗುವ ತಮ್ಮ ಯಜಮಾನನಿಗಾಗಿ ಕಾಯುತ್ತಿದ್ದು, ಅವನು ಬಂದು ಬಾಗಿಲನ್ನು ತಟ್ಟಿದ ತಕ್ಷಣವೇ ಅವನಿಗಾಗಿ ತೆರೆಯುವ ಸೇವಕರಂತೆ ಇರಿ.</verse>
				<verse number="37">ಯಜಮಾನನು ಬಂದಾಗ ಯಾರು ಎಚ್ಚರವಾಗಿರುವುದನ್ನು ಅವನು ಕಾಣುವನೋ ಆ ಸೇವಕರು ಧನ್ಯರು. ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿ ನಿಂತು ಅವರನ್ನು ಊಟಕ್ಕೆ ಕೂರಿಸಿ, ಅವರಿಗೆ ತಾನೇ ಸೇವೆಮಾಡುವನು.</verse>
				<verse number="38">ಯಜಮಾನನು ನಡು ರಾತ್ರಿಯಲ್ಲಾಗಲಿ ಮುಂಜಾನೆಯಲ್ಲಾಗಲಿ ಬಂದು, ಸೇವಕರು ಇನ್ನೂ ಎಚ್ಚರದಿಂದಿರುವುದನ್ನು ಕಂಡರೆ ಆ ಸೇವಕರು ಧನ್ಯರು.</verse>
				<verse number="39">ಆದರೆ, ಕಳ್ಳನು ಯಾವ ಸಮಯದಲ್ಲಿ ಬರುವನೆಂಬುದು ಮನೆಯ ಯಜಮಾನನಿಗೆ ತಿಳಿದಿದ್ದರೆ, ಅವನು ಎಚ್ಚರವಾಗಿದ್ದು ತನ್ನ ಮನೆಯನ್ನು ಪ್ರವೇಶಿಸಲು ಕನ್ನಾಹಾಕಲು ಬಿಡುತ್ತಿರಲಿಲ್ಲ ಎಂಬುದನ್ನು ತಿಳಿದುಕೊಳ್ಳಿರಿ.</verse>
				<verse number="40">ಆದಕಾರಣ ನೀವು ಸಹ ಸಿದ್ಧವಾಗಿರಿ, ಏಕೆಂದರೆ ನೀವು ನಿರೀಕ್ಷಿಸದ ಸಮಯದಲ್ಲಿ ಮನುಷ್ಯಪುತ್ರನಾದ ನಾನು ಬರುತ್ತೇನೆ,” ಎಂದು ಹೇಳಿದರು.</verse>
				<verse number="41">ಪೇತ್ರನು ಯೇಸುವಿಗೆ, “ಕರ್ತದೇವರೇ, ನೀವು ಈ ಸಾಮ್ಯವನ್ನು ನಮಗೆ ಮಾತ್ರ ಹೇಳುತ್ತೀರೋ ಅಥವಾ ಎಲ್ಲರಿಗೋ?” ಎಂದು ಕೇಳಿದನು.</verse>
				<verse number="42">ಕರ್ತದೇವರು ಹೇಳಿದ್ದೇನೆಂದರೆ, “ತಕ್ಕ ಕಾಲದಲ್ಲಿ ತನ್ನ ಸೇವಕರಿಗೆ ಅವರ ಪಾಲಿನ ಆಹಾರವನ್ನು ಕೊಡುವುದಕ್ಕಾಗಿ, ಅವರ ಯಜಮಾನನು ತನ್ನ ಮನೆಯ ಮೇಲೆ ನೇಮಿಸಿದ ನಂಬಿಗಸ್ತನೂ ಜ್ಞಾನಿಯೂ ಆಗಿರುವ ಆಡಳಿತಗಾರನು ಯಾರು?</verse>
				<verse number="43">ತನ್ನ ಯಜಮಾನನು ಬಂದಾಗ ಯಾವ ಸೇವಕನು ಸೇವೆ ಮಾಡುವುದನ್ನು ಕಾಣುವನೋ ಆ ಸೇವಕನು ಧನ್ಯನು.</verse>
				<verse number="44">ಅವನನ್ನು ಯಜಮಾನನು ತನ್ನ ಎಲ್ಲಾ ಆಸ್ತಿಯ ಮೇಲೆ ಆಡಳಿತಗಾರನಾಗಿ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.</verse>
				<verse number="45">ಆದರೆ ಆ ಸೇವಕನು, ‘ನನ್ನ ಯಜಮಾನನು ಬರುವುದಕ್ಕೆ ತಡಮಾಡುತ್ತಾನೆ,’ ಎಂದು ತನ್ನ ಹೃದಯದಲ್ಲಿ ಭಾವಿಸಿಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆದು, ತಿಂದು ಕುಡಿದು ಮತ್ತನಾಗುವುದಕ್ಕೆ ಆರಂಭಿಸಿದರೆ,</verse>
				<verse number="46">ಆ ಸೇವಕನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಸಮಯದಲ್ಲಿಯೂ ಅವನ ಯಜಮಾನನು ಬಂದು, ಅವನನ್ನು ಕಠಿಣವಾಗಿ ಹೊಡಿಸಿ ಅವಿಶ್ವಾಸಿಗಳಿಗೆ ಆಗ ಸಿಕ್ಕುವ ಪಾಲನ್ನು ಅವನಿಗೆ ನೇಮಿಸುವನು.</verse>
				<verse number="47">“ತನ್ನ ಯಜಮಾನನ ಚಿತ್ತವನ್ನು ತಿಳಿದು ತನ್ನನ್ನು ಸಿದ್ಧಮಾಡಿಕೊಳ್ಳದೆ, ಇಲ್ಲವೆ ಅವನ ಚಿತ್ತಕ್ಕೆ ಅನುಸಾರವಾಗಿ ಮಾಡದೆ ಇದ್ದ ಸೇವಕನು ಬಹಳ ಪೆಟ್ಟುಗಳಿಗೆ ಗುರಿಯಾಗುವನು.</verse>
				<verse number="48">ದಂಡನೆಗೆ ಯೋಗ್ಯವಾದದ್ದನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳಿಗೆ ಗುರಿಯಾಗುವನು. ಯಾವನಿಗೆ ಹೆಚ್ಚು ಕೊಡಲಾಗಿದೆಯೋ, ಅವನಿಂದ ಹೆಚ್ಚು ಕೇಳಲಾಗುವುದು; ಯಾವನಿಗೆ ಹೆಚ್ಚಾಗಿ ಒಪ್ಪಿಸಿರುವುದೋ, ಅವನಿಂದ ಹೆಚ್ಚಾಗಿಯೇ ಕೇಳಲಾಗುವುದು.”</verse>
				<verse number="49">“ನಾನು ಭೂಮಿಯ ಮೇಲೆ ಬೆಂಕಿಯನ್ನು ಹಾಕುವುದಕ್ಕಾಗಿ ಬಂದೆನು, ಅದು ಈಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ!</verse>
				<verse number="50">ಆದರೆ ನಾನು ಪಡೆಯಲಿರುವ ಒಂದು ದೀಕ್ಷಾಸ್ನಾನ ಉಂಟು, ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!</verse>
				<verse number="51">ನಾನು ಭೂಮಿಯ ಮೇಲೆ ಸಮಾಧಾನವನ್ನು ತರುವುದಕ್ಕಾಗಿ ಬಂದಿದ್ದೇನೆಂದು ನೀವು ಭಾವಿಸುತ್ತೀರೋ? ಇಲ್ಲ, ಭಿನ್ನಭೇದಗಳನ್ನು ಉಂಟುಮಾಡುವುದಕ್ಕೆ ಬಂದಿದ್ದೇನೆಂದು, ನಿಮಗೆ ಹೇಳುತ್ತೇನೆ.</verse>
				<verse number="52">ಹೇಗೆಂದರೆ ಇಂದಿನಿಂದ ಒಂದೇ ಮನೆಯಲ್ಲಿರುವ ಐದು ಮಂದಿಯಲ್ಲಿ ಇಬ್ಬರಿಗೆ ವಿರೋಧವಾಗಿ ಮೂವರೂ ಮೂವರಿಗೆ ವಿರೋಧವಾಗಿ ಇಬ್ಬರೂ ವಿಭಾಗವಾಗುವರು.</verse>
				<verse number="53">ತಂದೆಗೆ ವಿರೋಧವಾಗಿ ಮಗನು, ಮಗನಿಗೆ ವಿರೋಧವಾಗಿ ತಂದೆಯು, ತಾಯಿಗೆ ವಿರೋಧವಾಗಿ ಮಗಳು, ಮಗಳಿಗೆ ವಿರೋಧವಾಗಿ ತಾಯಿಯು, ಅತ್ತೆಗೆ ವಿರೋಧವಾಗಿ ಸೊಸೆಯು, ಸೊಸೆಗೆ ವಿರೋಧವಾಗಿ ಅತ್ತೆಯು ವಿಭಾಗವಾಗುವರು.”</verse>
				<verse number="54">ಯೇಸು ಜನಸಮೂಹಕ್ಕೆ ಹೇಳಿದ್ದೇನೆಂದರೆ: “ನೀವು ಪಶ್ಚಿಮದ ಕಡೆಯಿಂದ ಏಳುವ ಮೋಡವನ್ನು ನೋಡಿ, ‘ಮಳೆ ಬರುತ್ತದೆ ಎನ್ನುತ್ತೀರಿ,’ ಹಾಗೆಯೇ ಆಗುವುದು.</verse>
				<verse number="55">ದಕ್ಷಿಣ ದಿಕ್ಕಿನ ಗಾಳಿ ಬೀಸುವುದನ್ನು ನೀವು ನೋಡಿ, ‘ಸೆಕೆಯಾಗುತ್ತದೆ,’ ಎನ್ನುತ್ತೀರಿ, ಅದು ಹಾಗೆ ಆಗುತ್ತದೆ.</verse>
				<verse number="56">ಕಪಟಿಗಳೇ! ಭೂಮ್ಯಾಕಾಶಗಳ ಲಕ್ಷಣಗಳನ್ನು ನೀವು ಗ್ರಹಿಸಬಲ್ಲಿರಿ, ಆದರೆ ಈ ಕಾಲವನ್ನು ನೀವು ವಿವೇಚಿಸದಿರುವುದು ಹೇಗೆ?</verse>
				<verse number="57">“ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಏಕೆ ನಿರ್ಣಯಿಸಿಕೊಳ್ಳುವುದಿಲ್ಲ?</verse>
				<verse number="58">ನೀನು ನಿನ್ನ ವಿರೋಧಿಯ ಸಂಗಡ ನ್ಯಾಯಾಧಿಪತಿಯ ಎದುರಿಗೆ ಹೋಗುವಾಗ, ಮಾರ್ಗದಲ್ಲಿಯೇ ಅವನಿಂದ ವ್ಯಾಜ್ಯ ಬಗೆಹರಿಸಿಕೊಳ್ಳಲು ಪ್ರಯತ್ನ ಮಾಡು, ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆಯಬಹುದು, ಆಗ ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆಯ ಅಧಿಕಾರಿಗೆ ಒಪ್ಪಿಸಬಹುದು ಮತ್ತು ಅಧಿಕಾರಿಯು ನಿನ್ನನ್ನು ಸೆರೆಯಲ್ಲಿ ಹಾಕಬಹುದು.</verse>
				<verse number="59">ನೀನು ಕೊನೆಯ ರೂಪಾಯಿಯನ್ನು ಸಲ್ಲಿಸುವವರೆಗೂ ಅಲ್ಲಿಂದ ಹೊರಗೆ ಬರುವುದೇ ಇಲ್ಲವೆಂದು, ನಾನು ನಿನಗೆ ಹೇಳುತ್ತೇನೆ,” ಎಂದರು.</verse>
			</chapter>
			<chapter number="13">
				<verse number="1">ಪಿಲಾತನು, ಬಲಿ ಅರ್ಪಿಸುತ್ತಿದ್ದ ಗಲಿಲಾಯದವರ ರಕ್ತವನ್ನೇ ಅವರ ಬಲಿಗಳೊಂದಿಗೆ ಬೆರೆಸಿದ ವಿಷಯವನ್ನು ಯೇಸುವಿಗೆ ತಿಳಿಸಿದ ಕೆಲವರು ಆ ಸಮಯದಲ್ಲಿ ಅಲ್ಲಿದ್ದರು.</verse>
				<verse number="2">ಯೇಸು ಅವರಿಗೆ, “ಆ ಗಲಿಲಾಯದವರು ಇಂಥಾ ಕೊಲೆಗೆ ಈಡಾದ ಕಾರಣ ಅವರು ಎಲ್ಲಾ ಗಲಿಲಾಯದವರಿಗಿಂತ ದೋಷಿಗಳೆಂದು ನೀವು ಭಾವಿಸುತ್ತೀರೋ?</verse>
				<verse number="3">ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ, ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ.</verse>
				<verse number="4">ಇಲ್ಲವೆ ಸಿಲೋವ ಎಂಬಲ್ಲಿ ಗೋಪುರವು ಬಿದ್ದು ಸತ್ತು ಹೋದ ಆ ಹದಿನೆಂಟು ಜನರು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ದೋಷಿಗಳೆಂದು ಭಾವಿಸುತ್ತೀರೋ?</verse>
				<verse number="5">ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ! ನೀವು ದೇವರ ಕಡೆಗೆ ತಿರುಗಿಕೊಳ್ಳದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ,” ಎಂದರು.</verse>
				<verse number="6">ಅನಂತರ ಯೇಸು ಈ ಸಾಮ್ಯವನ್ನು ಹೇಳಿದರು: “ಒಬ್ಬ ಮನುಷ್ಯನಿಗೆ ತನ್ನ ದ್ರಾಕ್ಷಿಯ ತೋಟದಲ್ಲಿ ನೆಡಲಾಗಿದ್ದ, ಒಂದು ಅಂಜೂರದ ಮರವಿತ್ತು. ಅವನು ಬಂದು ಅದರಲ್ಲಿ ಫಲವನ್ನು ಹುಡುಕಲು ಒಂದೂ ಸಿಕ್ಕಲಿಲ್ಲ.</verse>
				<verse number="7">ಆಗ ಅವನು ತನ್ನ ದ್ರಾಕ್ಷಿಯ ತೋಟ ಮಾಡುವವನಿಗೆ, ‘ನೋಡು, ಮೂರು ವರ್ಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕುತ್ತಾ ಬಂದಿದ್ದೇನೆ, ಆದರೆ ಏನೂ ಸಿಕ್ಕಲಿಲ್ಲ. ಇದನ್ನು ಕಡಿದುಹಾಕು! ಇದು ಏಕೆ ನೆಲವನ್ನು ಕೆಡಿಸಬೇಕು?’ ಎಂದು ಹೇಳಿದನು.</verse>
				<verse number="8">“ಆದರೆ ಅವನು ಉತ್ತರವಾಗಿ ಅವನಿಗೆ, ‘ಒಡೆಯನೇ, ಇನ್ನೊಂದು ವರ್ಷವೂ ಇದನ್ನು ಬಿಡು, ನಾನು ಅದರ ಸುತ್ತಲೂ ಅಗಿದು ಗೊಬ್ಬರ ಹಾಕುವೆನು.</verse>
				<verse number="9">ಮುಂದಿನ ವರ್ಷ ಇದು ಫಲ ಫಲಿಸಿದರೆ, ಸರಿ! ಇಲ್ಲವಾದರೆ, ನೀನು ಇದನ್ನು ಕಡಿದುಹಾಕು, ಎಂದನು.’ ”</verse>
				<verse number="10">ಯೇಸು ಸಬ್ಬತ್ ದಿನದಲ್ಲಿ ಒಂದು ಸಭಾಮಂದಿರದೊಳಗೆ ಬೋಧಿಸುತ್ತಾ ಇದ್ದರು,</verse>
				<verse number="11">ಆಗ, ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ರೋಗ ಪೀಡಿತಳಾಗಿ ನಡುಬಗ್ಗಿ ಹೋಗಿದ್ದ ಒಬ್ಬ ಸ್ತ್ರೀಯು ಅಲ್ಲಿ ಇದ್ದಳು. ಆಕೆ ತನ್ನಷ್ಟಕ್ಕೆ ತಾನೇ ನೆಟ್ಟಗೆ ನಿಲ್ಲಲಾರದೆ ಇದ್ದಳು.</verse>
				<verse number="12">ಯೇಸು ಆಕೆಯನ್ನು ಕಂಡು, ಹತ್ತಿರಕ್ಕೆ ಕರೆದು ಆಕೆಗೆ, “ಅಮ್ಮಾ, ನೀನು ಈ ನಿನ್ನ ಬಲಹೀನತೆಯಿಂದ ಬಿಡುಗಡೆಯಾಗಿದ್ದಿ,” ಎಂದು ಹೇಳಿ,</verse>
				<verse number="13">ಯೇಸು ಆಕೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು, ಕೂಡಲೇ ಆಕೆಯು ನೆಟ್ಟಗಾದಳು ಮತ್ತು ದೇವರನ್ನು ಸ್ತುತಿಸಿದಳು.</verse>
				<verse number="14">ಯೇಸು ಸಬ್ಬತ್ ದಿನದಲ್ಲಿ ಸ್ವಸ್ಥಮಾಡಿದ ಕಾರಣ ಸಭಾಮಂದಿರದ ಅಧಿಕಾರಿಯು ಕೋಪದಿಂದ ಜನರಿಗೆ, “ಆರು ದಿವಸಗಳಲ್ಲಿ ಮನುಷ್ಯರು ಕೆಲಸ ಮಾಡತಕ್ಕದ್ದು. ಆದ್ದರಿಂದ ಆ ದಿನಗಳಲ್ಲಿ ನೀವು ಬಂದು ಸ್ವಸ್ಥರಾಗಿರಿ, ಸಬ್ಬತ್ ದಿನದಲ್ಲಿ ಬೇಡ,” ಎಂದನು.</verse>
				<verse number="15">ಅದಕ್ಕೆ ಕರ್ತದೇವರು ಅವನಿಗೆ, “ಕಪಟಿಗಳೇ! ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ, ಕತ್ತೆಯನ್ನಾಗಲಿ ಕೊಟ್ಟಿಗೆಯಿಂದ ಬಿಡಿಸಿ ನೀರು ಕುಡಿಸುವುದಕ್ಕಾಗಿ ಹೋಗುವುದಿಲ್ಲವೇ?</verse>
				<verse number="16">ಅಬ್ರಹಾಮನ ಮಗಳಾದ ಈ ಸ್ತ್ರೀಯನ್ನು ಹದಿನೆಂಟು ವರ್ಷಗಳಿಂದ ಸೈತಾನನು ಕಟ್ಟಿಹಾಕಿದ ಈ ಬಂಧನದಿಂದ ಸಬ್ಬತ್ ದಿನದಲ್ಲಿ ಬಿಡಿಸಬಾರದೇ?” ಎಂದರು.</verse>
				<verse number="17">ಯೇಸು ಇದನ್ನು ಹೇಳುತ್ತಿರುವಾಗ, ಅವರ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು, ಆದರೆ ಇತರರು, ಅವರಿಂದ ನಡೆದ ಎಲ್ಲಾ ಮಹಿಮೆಯುಳ್ಳ ಕಾರ್ಯಗಳಿಗಾಗಿ ಸಂತೋಷಪಟ್ಟರು.</verse>
				<verse number="18">ಅನಂತರ ಯೇಸು, “ದೇವರ ರಾಜ್ಯವು ಯಾವುದಕ್ಕೆ ಹೋಲಿಕೆಯಾಗಿದೆ? ನಾನು ಯಾವುದಕ್ಕೆ ಅದನ್ನು ಹೋಲಿಸಲಿ?</verse>
				<verse number="19">ಅದು ಸಾಸಿವೆಕಾಳಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಮನುಷ್ಯನು ತೆಗೆದುಕೊಂಡುಹೋಗಿ ತನ್ನ ತೋಟದಲ್ಲಿ ಬಿತ್ತಲು, ಅದು ಬೆಳೆದು ಒಂದು ದೊಡ್ಡ ಮರವಾಯಿತು. ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿ ವಾಸಮಾಡಿದವು,” ಎಂದರು.</verse>
				<verse number="20">ಪುನಃ ಯೇಸು, “ದೇವರ ರಾಜ್ಯವನ್ನು ಯಾವುದಕ್ಕೆ ಹೋಲಿಸಲಿ?</verse>
				<verse number="21">ಅದು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಸ್ತ್ರೀಯು ತೆಗೆದುಕೊಂಡು ಹುಳಿಯಿಲ್ಲದ ಸುಮಾರು ಇಪ್ಪತ್ತೇಳು ಕಿಲೋಗ್ರಾಂ ಹಿಟ್ಟಿನಲ್ಲಿ ಕಲಸಿದಾಗ ಆ ಹಿಟ್ಟೆಲ್ಲಾ ಹುಳಿಯಾಯಿತು,” ಎಂದರು.</verse>
				<verse number="22">ಯೇಸು ಪಟ್ಟಣಗಳನ್ನೂ ಹಳ್ಳಿಗಳನ್ನೂ ಸಂಚರಿಸಿ, ಅಲ್ಲೆಲ್ಲಾ ಬೋಧಿಸುತ್ತಾ ಯೆರೂಸಲೇಮಿನ ಕಡೆಗೆ ಪ್ರಯಾಣಮಾಡಿದರು.</verse>
				<verse number="23">ಒಬ್ಬನು ಯೇಸುವಿಗೆ, “ಸ್ವಾಮಿ, ರಕ್ಷಣೆ ಹೊಂದುವವರು ಕೆಲವರೋ?” ಎಂದು ಕೇಳಲು, ಯೇಸು ಅವರಿಗೆ,</verse>
				<verse number="24">“ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಪ್ರವೇಶಿಸುವುದಕ್ಕೆ ಪ್ರಯಾಸಪಡಿರಿ, ಅನೇಕರು ಒಳಗೆ ಪ್ರವೇಶಿಸುವುದಕ್ಕೆ ಪ್ರಯತ್ನಿಸಿದರೂ ಆಗುವುದಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.</verse>
				<verse number="25">ಮನೆಯಜಮಾನರು ಒಂದು ಸಾರಿ ಎದ್ದು ಬಾಗಿಲನ್ನು ಮುಚ್ಚಿಕೊಂಡರೆ, ನೀವು ಹೊರಗೆ ನಿಂತುಕೊಂಡು ಬಾಗಿಲನ್ನು ತಟ್ಟುತ್ತಾ, ‘ಸ್ವಾಮಿ, ನಮಗೆ ಬಾಗಿಲನ್ನು ತೆರೆಯಿರಿ,’ ಎಂದು ಹೇಳುವುದಕ್ಕೆ ಆರಂಭಿಸಿದಾಗ, “ಆತನು ನಿಮಗೆ ಉತ್ತರವಾಗಿ, ‘ನೀವು ಯಾರು? ಎಲ್ಲಿಯವರೋ ನಾನು ನಿಮ್ಮನ್ನು ಅರಿಯೆನು,’ ಎಂದು ಹೇಳುವನು.</verse>
				<verse number="26">“ಆಗ ನೀವು, ‘ನಿಮ್ಮೊಂದಿಗೆ ನಾವು ಊಟಮಾಡಿದೆವು, ಪಾನಮಾಡಿದೆವು, ನೀವು ನಮ್ಮ ಬೀದಿಗಳಲ್ಲಿ ಬೋಧಿಸಿದಿರಿ,’ ಎಂದು ಹೇಳಲಾರಂಭಿಸುವಿರಿ.</verse>
				<verse number="27">“ಅದಕ್ಕೆ ಆತನು, ‘ನೀವು ಎಲ್ಲಿಯವರೋ ನಾನರಿಯೆ, ಅನೀತಿಯನ್ನು ಮಾಡುವವರಾದ ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ,’ ಎಂದು ಹೇಳುವರು.</verse>
				<verse number="28">“ಅಬ್ರಹಾಮ, ಇಸಾಕ, ಯಾಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ಕಾಣುವಾಗ, ಅಲ್ಲಿ ನಿಮಗೆ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.</verse>
				<verse number="29">ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಜನರು ಬಂದು, ದೇವರ ರಾಜ್ಯದಲ್ಲಿ ಹಬ್ಬದ ಔತಣಕ್ಕೆ ಕುಳಿತುಕೊಳ್ಳುವರು.</verse>
				<verse number="30">ಆಗ ಕಡೆಯವರು ಮೊದಲನೆಯವರಾಗುವರು, ಮೊದಲನೆಯವರು ಕಡೆಯವರಾಗುವರು,” ಎಂದು ಹೇಳಿದರು.</verse>
				<verse number="31">ಅದೇ ಸಮಯದಲ್ಲಿ ಫರಿಸಾಯರಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು, “ನೀವು ಇಲ್ಲಿಂದ ಹೊರಟು ಹೋಗಿರಿ. ಹೆರೋದನು ನಿಮ್ಮನ್ನು ಕೊಲ್ಲಬೇಕೆಂದಿರುವನು,” ಎಂದು ಅವರಿಗೆ ಹೇಳಿದರು.</verse>
				<verse number="32">ಅದಕ್ಕೆ ಯೇಸು ಅವರಿಗೆ, “ಇಗೋ, ‘ನಾನು ಈ ದಿವಸ ಮತ್ತು ನಾಳೆ ದೆವ್ವಗಳನ್ನು ಓಡಿಸುತ್ತೇನೆ ಸ್ವಸ್ಥಮಾಡುತ್ತೇನೆ, ಮೂರನೆಯ ದಿನದಲ್ಲಿ ನಾನು ಸಿದ್ಧಿಗೆ ಬರುತ್ತೇನೆ,’ ಎಂದು ನೀವು ಹೋಗಿ ಆ ನರಿಗೆ ಹೇಳಿರಿ.</verse>
				<verse number="33">ಆದರೂ ಈ ದಿವಸ ಮತ್ತು ನಾಳೆ ಮತ್ತು ನಾಡಿದ್ದು ನಾನು ಪ್ರಯಾಣ ಮಾಡಲೇಬೇಕು. ಏಕೆಂದರೆ ಒಬ್ಬ ಪ್ರವಾದಿಯು ಯೆರೂಸಲೇಮಿನ ಹೊರಗೆ ಕೊಲೆಗೀಡಾಗಬಾರದು!</verse>
				<verse number="34">“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಕೂಡಿಸುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು. ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.</verse>
				<verse number="35">ನೋಡಿರಿ, ನಿಮ್ಮ ದೇವಾಲಯವು ನಿಮಗೆ ಬರಿದಾಗಿ ಹಾಳುಬೀಳುವುದು. ಏಕೆಂದರೆ, ‘ಕರ್ತದೇವರ ಹೆಸರಿನಲ್ಲಿ ಬರುವವರು ಧನ್ಯರು,’ ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ಕಾಣುವುದೇ ಇಲ್ಲ, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.</verse>
			</chapter>
			<chapter number="14">
				<verse number="1">ಯೇಸು ಒಂದು ಸಬ್ಬತ್ ದಿನದಲ್ಲಿ, ಫರಿಸಾಯರ ಮುಖ್ಯಸ್ಥರಲ್ಲಿ ಒಬ್ಬನ ಮನೆಯೊಳಗೆ ಊಟಕ್ಕೆ ಹೋದಾಗ, ಎಲ್ಲರು ಅವರನ್ನು ಗಮನಿಸುತ್ತಿದ್ದರು.</verse>
				<verse number="2">ಅಲ್ಲಿ ದೇಹದಲ್ಲಿ ಅಸಾಧಾರಣವಾಗಿ ನೀರು ತುಂಬಿದ್ದ ರೋಗಿಯೊಬ್ಬನು ಯೇಸುವಿನ ಮುಂದೆ ಇದ್ದನು.</verse>
				<verse number="3">ಆಗ ಯೇಸು ನಿಯಮ ಪಂಡಿತರಿಗೂ ಫರಿಸಾಯರಿಗೂ, “ಸಬ್ಬತ್ ದಿನದಲ್ಲಿ ಸ್ವಸ್ಥಮಾಡುವುದು ಮೋಶೆಯ ನಿಯಮದ ಪ್ರಕಾರವೋ?” ಎಂದು ಕೇಳಿದರು.</verse>
				<verse number="4">ಆದರೆ ಅವರು ಮೌನವಾಗಿಯೇ ಇದ್ದರು. ಆಗ ಯೇಸು, ಆ ರೋಗಿಯನ್ನು ಸ್ವಸ್ಥಮಾಡಿ ಕಳುಹಿಸಿಬಿಟ್ಟರು.</verse>
				<verse number="5">ಆಗ ಯೇಸು ಅವರಿಗೆ, “ನಿಮ್ಮಲ್ಲಿ ಒಬ್ಬರ ಮಗುವಾಗಲಿ, ಎತ್ತಾಗಲಿ ಒಂದು ಬಾವಿಯಲ್ಲಿ ಬಿದ್ದರೆ, ಅದನ್ನು ತಕ್ಷಣವೇ ಸಬ್ಬತ್ ದಿನದಲ್ಲಿ ಮೇಲಕ್ಕೆ ಎಳೆಯುವುದಿಲ್ಲವೇ?” ಎಂದು ಕೇಳಿದರು.</verse>
				<verse number="6">ಅದಕ್ಕೆ ಅವರು ಉತ್ತರ ಕೊಡಲಾರದೆ ಇದ್ದರು.</verse>
				<verse number="7">ಊಟಕ್ಕೆ ಆಹ್ವಾನಿತರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಯೇಸು ಗುರುತಿಸಿ, ಅವರಿಗೆ ಒಂದು ಸಾಮ್ಯವನ್ನು ಹೇಳಿದರು:</verse>
				<verse number="8">“ಯಾರಾದರೂ ನಿನ್ನನ್ನು ಮದುವೆಯ ಊಟಕ್ಕೆ ಕರೆದರೆ ಮೊದಲನೆಯ ಸ್ಥಾನದಲ್ಲಿ ಕುಳಿತುಕೊಳ್ಳಬೇಡ, ಏಕೆಂದರೆ ಅವನು ನಿನಗಿಂತಲೂ ಗೌರವವುಳ್ಳ ಮನುಷ್ಯನನ್ನು ಆಹ್ವಾನಿಸಿರಬಹುದು.</verse>
				<verse number="9">ಆಗ, ನಿನ್ನನ್ನು ಮತ್ತು ಅವನನ್ನು ಆಹ್ವಾನಿಸಿದವನು ಬಂದು ನಿನಗೆ, ‘ಈ ಮನುಷ್ಯನಿಗೆ ಸ್ಥಳಕೊಡು,’ ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಾನದಲ್ಲಿ ಕುಳಿತುಕೊಳ್ಳಬೇಕಾಗುವುದು.</verse>
				<verse number="10">ಆದರೆ ನಿನ್ನನ್ನು ಆಹ್ವಾನಿಸಿದಾಗ, ಹೋಗಿ ಕಡೇ ಸ್ಥಳದಲ್ಲಿ ಕುಳಿತುಕೋ, ಆಗ ನಿನ್ನನ್ನು ಆಹ್ವಾನಿಸಿದವನು ಬಂದು ನಿನಗೆ, ‘ಸ್ನೇಹಿತನೇ, ಉತ್ತಮ ಸ್ಥಳಕ್ಕೆ ಬಾ,’ ಎಂದು ಹೇಳುವಾಗ ನಿನ್ನ ಜೊತೆಯಲ್ಲಿ ಊಟಕ್ಕೆ ಕುಳಿತವರೆಲ್ಲರ ಮುಂದೆ ನಿನಗೆ ಗೌರವವಿರುವುದು.</verse>
				<verse number="11">ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.</verse>
				<verse number="12">ಯೇಸು ತಮ್ಮನ್ನು ಆಹ್ವಾನಿಸಿದವನಿಗೆ, “ನೀನು ಮಧ್ಯಾಹ್ನದ ಊಟಕ್ಕೆ ಇಲ್ಲವೆ ರಾತ್ರಿಯ ಊಟಕ್ಕೆ ಸಿದ್ಧಪಡಿಸಿದಾಗ, ನಿನ್ನ ಸ್ನೇಹಿತರನ್ನಾಗಲಿ ನಿನ್ನ ಸಹೋದರ ಸಹೋದರಿಯನ್ನಾಗಲಿ, ನಿನ್ನ ಬಂಧುಗಳನ್ನಾಗಲಿ, ಇಲ್ಲವೆ ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ, ಏಕೆಂದರೆ ಅವರೂ ಪ್ರತಿಯಾಗಿ ನಿನ್ನನ್ನೂ ಆಹ್ವಾನಿಸಬಹುದು ಮತ್ತು ನಿನಗೆ ಪ್ರತ್ಯುಪಕಾರವಾದೀತು.</verse>
				<verse number="13">ಆದರೆ ನೀನು ಔತಣಮಾಡಿಸಿದಾಗ, ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಆಹ್ವಾನಿಸು.</verse>
				<verse number="14">ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವುದಕ್ಕೆ ಆಗದಿರುವುದರಿಂದ, ನೀನು ಧನ್ಯನಾಗುವೆ. ಏಕೆಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವುದು.”</verse>
				<verse number="15">ಯೇಸುವಿನ ಸಂಗಡ ಔತಣಕ್ಕೆ ಕುಳಿತವರಲ್ಲಿ ಒಬ್ಬನು ಈ ಸಂಗತಿಗಳನ್ನು ಕೇಳಿ ಅವರಿಗೆ, “ದೇವರ ರಾಜ್ಯದಲ್ಲಿ ಊಟಮಾಡುವವನು ಧನ್ಯನು,” ಎಂದು ಹೇಳಿದನು.</verse>
				<verse number="16">ಯೇಸು ಅವನಿಗೆ ಹೀಗೆ ಹೇಳಿದರು: “ಒಬ್ಬ ಮನುಷ್ಯನು ಒಂದು ದೊಡ್ಡ ಔತಣ ಮಾಡಿಸಿ ಅನೇಕರನ್ನು ಆಹ್ವಾನಿಸಿದನು.</verse>
				<verse number="17">ಊಟಕ್ಕೆ ಸಮಯವಾದಾಗ ಆಹ್ವಾನಿತರಿಗೆ ಅವನು, ‘ಎಲ್ಲವೂ ಸಿದ್ಧವಾಗಿದೆ ಬನ್ನಿರಿ,’ ಎಂದು ಹೇಳಲು ತನ್ನ ಸೇವಕನನ್ನು ಕಳುಹಿಸಿದನು.</verse>
				<verse number="18">“ಆದರೆ ಅವರೆಲ್ಲರೂ ಒಂದೇ ರೀತಿಯಾಗಿ ನೆಪ ಹೇಳಲಾರಂಭಿಸಿದರು. ಮೊದಲನೆಯವನು, ‘ನಾನು ಒಂದು ಹೊಲ ಕೊಂಡುಕೊಂಡಿದ್ದೇನೆ, ನಾನು ಅದನ್ನು ನೋಡಬೇಕಾಗಿದೆ, ದಯವಿಟ್ಟು ಕ್ಷಮಿಸಬೇಕು,’ ಎಂದು ಹೇಳಿದನು.</verse>
				<verse number="19">“ಇನ್ನೊಬ್ಬನು, ‘ನಾನು ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸಲು ಹೋಗುತ್ತಿದ್ದೇನೆ, ದಯವಿಟ್ಟು ನನ್ನನ್ನು ಕ್ಷಮಿಸಬೇಕು,’ ಎಂದನು.</verse>
				<verse number="20">“ಮತ್ತೊಬ್ಬನು, ‘ನಾನು ಮದುವೆ ಮಾಡಿಕೊಂಡಿದ್ದೇನೆ, ಆದ್ದರಿಂದ ಬರಲಾರೆ,’ ಎಂದನು.</verse>
				<verse number="21">“ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಲು, ಆ ಮನೆಯಜಮಾನನು ಕೋಪಗೊಂಡು ತನ್ನ ಸೇವಕನಿಗೆ, ‘ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ, ಬಡವರನ್ನೂ ಊನವಾದವರನ್ನೂ ಕುರುಡರನ್ನೂ ಕುಂಟರನ್ನೂ ಇಲ್ಲಿ ಕರೆದುಕೊಂಡು ಬಾ,’ ಎಂದನು.</verse>
				<verse number="22">“ಆ ಸೇವಕನು, ‘ಸ್ವಾಮಿ, ನೀನು ಅಪ್ಪಣೆ ಕೊಟ್ಟಂತೆ ಮಾಡಿದ್ದಾಯಿತು, ಆದರೂ ಸ್ಥಳವಿದೆ,’ ಎಂದನು.</verse>
				<verse number="23">“ಆಗ ಯಜಮಾನನು ಸೇವಕನಿಗೆ, ‘ನೀನು ಬೀದಿಗಳಿಗೂ ಓಣಿಗಳಿಗೂ ಹೊರಟುಹೋಗಿ ನನ್ನ ಮನೆ ತುಂಬುವಂತೆ, ಇಲ್ಲಿ ಬರುವುದಕ್ಕೆ ಕಂಡವರನ್ನು ಬಲವಂತಮಾಡು.</verse>
				<verse number="24">ಆದರೆ, ಮೊದಲು ಆಹ್ವಾನಿತರಲ್ಲಿ ಒಬ್ಬನಾದರೂ ನನ್ನ ಔತಣವನ್ನು ರುಚಿ ನೋಡಬಾರದು ಎಂದು ನಾನು ನಿನಗೆ ಹೇಳುತ್ತೇನೆ.’ ”</verse>
				<verse number="25">ದೊಡ್ಡ ಜನಸಮೂಹವು ಯೇಸುವಿನ ಸಂಗಡ ಹೋಗುತ್ತಿರಲು, ಯೇಸು ತಿರುಗಿಕೊಂಡು ಅವರನ್ನು ನೋಡಿ ಹೇಳಿದ್ದೇನೆಂದರೆ:</verse>
				<verse number="26">“ಯಾರಾದರೂ ನನ್ನ ಬಳಿಗೆ ಬಂದು ತಮ್ಮ ತಂದೆ, ತಾಯಿ, ಹೆಂಡತಿ, ಮಕ್ಕಳು, ಸಹೋದರರು, ಸಹೋದರಿಯರು ಹಾಗೂ ತಮ್ಮ ಸ್ವಂತ ಪ್ರಾಣವನ್ನು ಸಹ ದ್ವೇಷಿಸದಿದ್ದರೆ ಅವರು ನನ್ನ ಶಿಷ್ಯರಾಗಲಾರರು.</verse>
				<verse number="27">ಯಾರಾದರೂ ತಮ್ಮ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸದವರು ನನ್ನ ಶಿಷ್ಯರಾಗಲಾರರು.</verse>
				<verse number="28">“ನಿಮ್ಮಲ್ಲಿ ಒಬ್ಬರು ಗೋಪುರವನ್ನು ಕಟ್ಟಲು ಇಚ್ಛಿಸಿದರೆ. ನೀವು ಮೊದಲು ಕುಳಿತು ಅದನ್ನು ಪೂರೈಸುವುದಕ್ಕೆ ಬೇಕಾದ ಖರ್ಚು ಇದೆಯೋ ಎಂದು ಲೆಕ್ಕ ಮಾಡುವುದಿಲ್ಲವೋ?</verse>
				<verse number="29">ಒಂದು ವೇಳೆ ಹಾಗೆ ಲೆಕ್ಕಮಾಡದೆ ನೀವು ಅದಕ್ಕೆ ಅಸ್ತಿವಾರ ಹಾಕಿದ ಮೇಲೆ, ಅದನ್ನು ಪೂರೈಸದಿದ್ದರೆ, ನಿಮ್ಮನ್ನು ನೋಡುವವರೆಲ್ಲರೂ, ‘ಈ ವ್ಯಕ್ತಿ ಕಟ್ಟಲಾರಂಭಿಸಿದ, ಮುಗಿಸಲು ಇವನಿಗೆ ಆಗಲಿಲ್ಲ,’ ಎಂದು ಹೇಳಿ ಹಾಸ್ಯಮಾಡುವರು.</verse>
				<verse number="30">“ಅಥವಾ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೋಗುವಾಗ, ಮೊದಲು ಕುಳಿತು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ ಸೈನ್ಯದೊಂದಿಗೆ ಬರುವ ಆ ಅರಸನನ್ನು ತನ್ನ ಹತ್ತು ಸಾವಿರ ಸೈನ್ಯದೊಂದಿಗೆ ಎದುರಿಸುವುದಕ್ಕೆ ಸಮರ್ಥವೋ ಎಂದು ಆಲೋಚನೆ ಮಾಡುವುದಿಲ್ಲವೇ?</verse>
				<verse number="31">ಸಾಮರ್ಥ್ಯ ಇಲ್ಲದಿದ್ದರೆ, ಇನ್ನೂ ದೂರದಲ್ಲಿರುವಾಗಲೇ ಪ್ರತಿನಿಧಿಗಳನ್ನು ಕಳುಹಿಸಿ ಸಮಾಧಾನವನ್ನು ಕೋರುವನಲ್ಲವೇ?</verse>
				<verse number="32">ಆದ್ದರಿಂದ ನಿಮ್ಮಲ್ಲಿ ಯಾರಾದರೂ ತಮಗಿರುವುದನ್ನೆಲ್ಲಾ ಬಿಟ್ಟುಬಿಡದಿದ್ದರೆ, ಅವರು ನನ್ನ ಶಿಷ್ಯರಾಗಲಾರರು.</verse>
				<verse number="33">“ಉಪ್ಪು ಒಳ್ಳೆಯದು, ಆದರೆ ಉಪ್ಪೇ ಸಪ್ಪಗಾದರೆ, ಅದಕ್ಕೆ ಇನ್ನಾವುದರಿಂದ ರುಚಿ ಬಂದೀತು?</verse>
				<verse number="34">ಅದು ಭೂಮಿಗಾದರೂ ಗೊಬ್ಬರಕ್ಕಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. “ಕೇಳುವುದಕ್ಕೆ ಕಿವಿಯುಳ್ಳವರು, ಕೇಳಲಿ.”</verse>
			</chapter>
			<chapter number="15">
				<verse number="1">ಅನೇಕ ಸುಂಕದವರೂ ಪಾಪಿಗಳೆನ್ನಿಸಿಕೊಂಡವರೂ ಯೇಸುವಿನ ಉಪದೇಶವನ್ನು ಕೇಳಲು ಅವರ ಸಮೀಪಕ್ಕೆ ಬಂದರು.</verse>
				<verse number="2">ಫರಿಸಾಯರು ಮತ್ತು ನಿಯಮ ಬೋಧಕರು, “ಈತನು ಪಾಪಿಗಳನ್ನು ಸ್ವೀಕರಿಸಿ ಅವರೊಂದಿಗೆ ಊಟಮಾಡುತ್ತಾನೆ,” ಎಂದು ಗೊಣಗುಟ್ಟಿದರು.</verse>
				<verse number="3">ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದರು:</verse>
				<verse number="4">“ನಿಮ್ಮಲ್ಲಿ ಯಾವ ಮನುಷ್ಯನು ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದನ್ನು ಕಳೆದುಕೊಂಡರೆ, ಅವನು ತೊಂಬತ್ತೊಂಬತ್ತು ಕುರಿಗಳನ್ನು ಹುಲ್ಲುಗಾವಲಿನಲ್ಲಿ ಬಿಟ್ಟು ಕಳೆದುಹೋದ ಆ ಒಂದು ಕುರಿ ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದಿರುವನೇ?</verse>
				<verse number="5">ಅದು ಸಿಕ್ಕಿದ ಮೇಲೆ ಸಂತೋಷಪಡುತ್ತಾ ಅದನ್ನು ತನ್ನ ಹೆಗಲ ಮೇಲೆ ಎತ್ತಿಕೊಂಡು,</verse>
				<verse number="6">ಅವನು ಮನೆಗೆ ಬಂದು, ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು ಅವರಿಗೆ, ‘ನನ್ನ ಸಂಗಡ ಸಂತೋಷಪಡಿರಿ; ಕಳೆದುಹೋದ ಕುರಿ ನನಗೆ ಸಿಕ್ಕಿತು ಎನ್ನುವನು.’</verse>
				<verse number="7">ಅದರಂತೆಯೇ, ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಲು ಅವಶ್ಯವಿಲ್ಲದ ತೊಂಬತ್ತೊಂಬತ್ತು ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಬಹಳ ಸಂತೋಷ ಉಂಟಾಗುವುದು ಎಂದು ನಾನು ನಿಮಗೆ ಹೇಳುತ್ತೇನೆ.</verse>
				<verse number="8">“ಒಬ್ಬ ಸ್ತ್ರೀಯು ತನ್ನ ಬಳಿ ಹತ್ತು ಬೆಳ್ಳಿಯ ನಾಣ್ಯವಿರಲಾಗಿ, ಒಂದು ನಾಣ್ಯವನ್ನು ಕಳೆದುಕೊಂಡರೆ, ಅವಳು ದೀಪಹಚ್ಚಿ ಮನೆಯನ್ನು ಗುಡಿಸಿ, ಅದು ಸಿಕ್ಕುವವರೆಗೆ ಜಾಗ್ರತೆಯಿಂದ ಹುಡುಕುವುದಿಲ್ಲವೇ?</verse>
				<verse number="9">ಅವಳು ಅದನ್ನು ಕಂಡುಕೊಂಡ ಮೇಲೆ, ತನ್ನ ಗೆಳತಿಯರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು, ಅವರಿಗೆ, ‘ಕಳೆದುಹೋದ ನಾಣ್ಯವು ಸಿಕ್ಕಿತು; ನನ್ನ ಸಂಗಡ ಸಂತೋಷಪಡಿರಿ,’ ಎನ್ನುವಳು.</verse>
				<verse number="10">ಅದೇ ಪ್ರಕಾರ, ಪಶ್ಚಾತ್ತಾಪಪಟ್ಟು ದೇವರ ಕಡೆ ತಿರುಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವುದು, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.</verse>
				<verse number="11">ಇನ್ನೂ ಯೇಸು ಹೇಳಿದ್ದು: “ಒಬ್ಬ ಮನುಷ್ಯನಿಗೆ ಇಬ್ಬರು ಪುತ್ರರಿದ್ದರು.</verse>
				<verse number="12">ಅವರಲ್ಲಿ ಕಿರಿಯವನು ತನ್ನ ತಂದೆಗೆ, ‘ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು,’ ಎಂದನು. ಆಗ ತಂದೆ ತನ್ನ ಆಸ್ತಿಯನ್ನು ಅವರಿಬ್ಬರಿಗೂ ಪಾಲು ಮಾಡಿಕೊಟ್ಟನು.</verse>
				<verse number="13">“ಕೆಲವೇ ದಿನಗಳಲ್ಲಿ, ಕಿರಿಯ ಮಗನು ಎಲ್ಲವನ್ನೂ ಕೂಡಿಸಿಕೊಂಡು, ದೂರದೇಶಕ್ಕೆ ಪ್ರಯಾಣಮಾಡಿ, ಅಲ್ಲಿ ದುಂದು ವೆಚ್ಚದ ಜೀವನ ಮಾಡಿ ತನ್ನ ಆಸ್ತಿಯನ್ನು ಹಾಳು ಮಾಡಿಕೊಂಡನು.</verse>
				<verse number="14">ಅವನು ಎಲ್ಲವನ್ನೂ ಹಾಳುಮಾಡಿದ ಮೇಲೆ, ಆ ದೇಶದಾದ್ಯಂತ ಘೋರವಾದ ಕ್ಷಾಮವು ಬಂದು, ಕೊರತೆಪಡಲಾರಂಭಿಸಿದನು.</verse>
				<verse number="15">ಆಗ ಅವನು ಹೋಗಿ ಆ ದೇಶದ ನಿವಾಸಿಯೊಬ್ಬನನ್ನು ಆಶ್ರಯಿಸಿಕೊಂಡನು, ಆ ಮನುಷ್ಯನು ಹಂದಿಗಳನ್ನು ಮೇಯಿಸುವುದಕ್ಕೆ ಅವನನ್ನು ತನ್ನ ಹೊಲಗಳಿಗೆ ಕಳುಹಿಸಿದನು.</verse>
				<verse number="16">ಅವನು ಹಂದಿಗಳು ತಿನ್ನುತ್ತಿದ್ದ ಸಿಪ್ಪೆಗಳಿಂದಾದರೂ ತನ್ನ ಹೊಟ್ಟೆಯನ್ನು ತುಂಬಿಸಿಕೊಳ್ಳುವುದಕ್ಕೆ ಆಶೆಪಟ್ಟನು, ಆದರೆ ಅದನ್ನು ಸಹ ಅವನಿಗೆ ಯಾರೂ ಕೊಡಲಿಲ್ಲ.</verse>
				<verse number="17">“ಆಗ ಅವನಿಗೆ ಬುದ್ಧಿ ಬಂದು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಕೂಲಿಯಾಳುಗಳಿಗೆ ಸಾಕಾಗಿಯೂ ಉಳಿಯುವಷ್ಟು ಆಹಾರವಿದೆಯಲ್ಲಾ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ!</verse>
				<verse number="18">ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ, ಆತನಿಗೆ: ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿಮಗೆ ವಿರೋಧವಾಗಿಯೂ ನಾನು ಪಾಪಮಾಡಿದ್ದೇನೆ.</verse>
				<verse number="19">ಇನ್ನೆಂದಿಗೂ ನಾನು ನಿಮ್ಮ ಮಗನೆಂದು ಕರೆಸಿಕೊಳ್ಳುವುದಕ್ಕೆ ಯೋಗ್ಯನಲ್ಲ; ನನ್ನನ್ನು ಕೂಲಿಯಾಳುಗಳಲ್ಲಿ ಒಬ್ಬನಂತೆ ಮಾಡು ಎನ್ನುವೆನು,’ ಎಂದುಕೊಂಡು,</verse>
				<verse number="20">ಎದ್ದು ತನ್ನ ತಂದೆಯ ಬಳಿಗೆ ಹೋದನು. “ಆದರೆ ಅವನು ಇನ್ನೂ ಬಹಳ ದೂರದಲ್ಲಿರುವಾಗಲೇ, ಅವನ ತಂದೆಯು ಅವನನ್ನು ಕಂಡು, ಕನಿಕರಪಟ್ಟು, ಓಡಿಬಂದು, ಅವನ ಕೊರಳನ್ನು ಅಪ್ಪಿಕೊಂಡು ಅವನಿಗೆ ಮುದ್ದಿಟ್ಟನು.</verse>
				<verse number="21">“ಆದರೂ ಮಗನು ತಂದೆಗೆ, ‘ಅಪ್ಪಾ, ನಾನು ಪರಲೋಕಕ್ಕೆ ವಿರೋಧವಾಗಿಯೂ ನಿಮ್ಮ ಮುಂದೆಯೂ ಪಾಪಮಾಡಿದ್ದೇನೆ. ಇನ್ನೆಂದಿಗೂ ನಾನು ನಿಮ್ಮ ಮಗನೆಂದು ಕರೆಯಿಸಿಕೊಳ್ಳಲು ಯೋಗ್ಯನಲ್ಲ,’ ಎಂದನು.</verse>
				<verse number="22">“ಆದರೆ ತಂದೆಯು ತನ್ನ ಸೇವಕರಿಗೆ, ‘ಶ್ರೇಷ್ಠವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಇವನ ಬೆರಳಿಗೆ ಉಂಗುರವನ್ನು ತೊಡಿಸಿರಿ, ಪಾದಗಳಿಗೆ ಪಾದರಕ್ಷೆಗಳನ್ನೂ ಮೆಟ್ಟಿಸಿರಿ.</verse>
				<verse number="23">ಇದಲ್ಲದೆ ವಿಶೇಷ ಆಹಾರವನ್ನು ತಂದು ಕೊಯ್ದು ವಿಶೇಷ ಔತಣವನ್ನು ಬೇಗ ಸಿದ್ಧಮಾಡಿರಿ. ನಾವು ಉಂಡು ಸಂತೋಷಪಡೋಣ.</verse>
				<verse number="24">ಏಕೆಂದರೆ ಈ ನನ್ನ ಮಗನು ಸತ್ತುಹೋಗಿದ್ದನು, ತಿರುಗಿ ಬದುಕಿದ್ದಾನೆ; ಕಳೆದುಹೋಗಿದ್ದನು, ಸಿಕ್ಕಿದ್ದಾನೆ,’ ಎಂದು ಹೇಳಿದನು. ಹೀಗೆ ಅವರು ಅವನ ಬರುವಿಕೆಯನ್ನು ಆಚರಿಸತೊಡಗಿದರು.</verse>
				<verse number="25">“ಆಗ, ಹಿರಿಯ ಮಗನು ಹೊಲದಲ್ಲಿದ್ದನು. ಅವನು ಮನೆಯ ಸಮೀಪಕ್ಕೆ ಬರುತ್ತಿದ್ದಾಗ, ನರ್ತನವನ್ನೂ ವಾದ್ಯವನ್ನೂ ಕೇಳಿ,</verse>
				<verse number="26">ಸೇವಕರಲ್ಲಿ ಒಬ್ಬನನ್ನು ಕರೆದು, ‘ಇವುಗಳು ಏನು?’ ಎಂದು ಕೇಳಿದನು.</verse>
				<verse number="27">ಆ ಸೇವಕನು ಅವನಿಗೆ, ‘ನಿನ್ನ ತಮ್ಮನು ಬಂದಿದ್ದಾನೆ, ನಿನ್ನ ತಂದೆಯು ಅವನು ಸುರಕ್ಷಿತವಾಗಿ ಮತ್ತು ಸೌಖ್ಯವಾಗಿ ಹಿಂದಿರುಗಿದ್ದರಿಂದ, ವಿಶೇಷ ಔತಣವನ್ನು ಮಾಡಿಸಿದ್ದಾನೆ,’ ಎಂದನು.</verse>
				<verse number="28">“ಅದಕ್ಕೆ ಹಿರಿಯ ಮಗನು ಕೋಪಗೊಂಡು ಒಳಗೆ ಹೋಗಲು ಇಷ್ಟಪಡಲಿಲ್ಲ. ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.</verse>
				<verse number="29">ಆದರೆ ಅವನು ಉತ್ತರವಾಗಿ ತನ್ನ ತಂದೆಗೆ, ‘ಎಷ್ಟೋ ವರ್ಷಗಳಿಂದ ನಾನು ನಿನ್ನ ಸೇವೆ ಮಾಡುತ್ತಿದ್ದೇನೆ. ನಾನು ನಿನ್ನ ಒಂದು ಅಪ್ಪಣೆಯನ್ನಾದರೂ ಎಂದೂ ಮೀರಲಿಲ್ಲ. ಆದರೂ ನಾನು ನನ್ನ ಸ್ನೇಹಿತರೊಂದಿಗೆ ಉಲ್ಲಾಸಪಡುವುದಕ್ಕಾಗಿ ನೀನು ಎಂದೂ ನನಗೆ ಒಂದು ಮೇಕೆಯ ಮರಿಯನ್ನಾದರೂ ಕೊಡಲಿಲ್ಲ.</verse>
				<verse number="30">ಆದರೆ ನಿನ್ನ ಆಸ್ತಿಯನ್ನು ವೇಶ್ಯೆಯರೊಂದಿಗೆ ನುಂಗಿಬಿಟ್ಟ ಈ ನಿನ್ನ ಮಗನು ಬಂದಾಗ, ವಿಶೇಷ ಔತಣವನ್ನೇ ಮಾಡಿಸಿದ್ದೀಯಲ್ಲಾ!’ ಎಂದನು.</verse>
				<verse number="31">“ಆಗ ತಂದೆ, ‘ಕಂದಾ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ, ನನಗಿರುವುದೆಲ್ಲವೂ ನಿನ್ನದೇ.</verse>
				<verse number="32">ಆದರೆ ಈ ನಿನ್ನ ತಮ್ಮ ಸತ್ತುಹೋಗಿದ್ದನು, ತಿರುಗಿ ಬದುಕಿದ್ದಾನೆ; ಕಳೆದುಹೋಗಿದ್ದನು, ಸಿಕ್ಕಿದ್ದಾನೆ. ಆದಕಾರಣ ನಾವು ಉಲ್ಲಾಸಪಟ್ಟು ಆನಂದಪಡುವುದು ಯುಕ್ತವಾದದ್ದೇ ಎಂದು ಹೇಳಿದನು.’ ”</verse>
			</chapter>
			<chapter number="16">
				<verse number="1">ಯೇಸು ತಮ್ಮ ಶಿಷ್ಯರಿಗೆ ಹೇಳಿದ್ದು: “ಒಬ್ಬ ಐಶ್ವರ್ಯವಂತನಿದ್ದನು, ಅವನಿಗಿದ್ದ ಒಬ್ಬ ನಿರ್ವಾಹಕನು ಅವನ ಸರಕುಗಳನ್ನು ಹಾಳು ಮಾಡುತ್ತಿದ್ದಾನೆಂದು ಅವನಿಗೆ ಯಾರೋ ದೂರು ಹೇಳಿದರು.</verse>
				<verse number="2">ಆಗ ಐಶ್ವರ್ಯವಂತನು ಆ ನಿರ್ವಾಹಕನನ್ನು ಕರೆದು, ‘ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವುದು? ನಿನ್ನ ಲೆಕ್ಕವನ್ನು ಒಪ್ಪಿಸು. ನೀನು ಇನ್ನು ಮೇಲೆ ನಿರ್ವಾಹಕನಾಗಿರಲು ಆಗಲ್ಲ,’ ಎಂದನು.</verse>
				<verse number="3">“ಆಗ ಆ ನಿರ್ವಾಹಕನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಯಜಮಾನನು ನನ್ನನ್ನು ಕೆಲಸದಿಂದ ತೆಗೆದುಬಿಡುತ್ತಾನಲ್ಲಾ. ಅಗೆಯಲು ನನಗೆ ಶಕ್ತಿಯಿಲ್ಲ, ಭಿಕ್ಷೆ ಬೇಡಲು ನನಗೆ ನಾಚಿಕೆ.</verse>
				<verse number="4">ಕೆಲಸದಿಂದ ನನ್ನನ್ನು ತೆಗೆದುಹಾಕಿದ ಮೇಲೆ, ಜನರು ನನ್ನನ್ನು ತಮ್ಮ ಮನೆಗಳಲ್ಲಿ ಸೇರಿಸಿಕೊಳ್ಳುವಂತೆ, ನಾನು ಏನು ಮಾಡಬೇಕಾದದ್ದು ಗೊತ್ತಾಯಿತು’ ಎಂದುಕೊಂಡನು.</verse>
				<verse number="5">“ಹೀಗೆ ಅವನು ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದು ಮೊದಲನೆಯವನಿಗೆ, ‘ನೀನು ನನ್ನ ಯಜಮಾನನಿಗೆ ತೀರಿಸಬೇಕಾದ ಸಾಲವೆಷ್ಟು?’ ಎಂದು ಕೇಳಲು,</verse>
				<verse number="6">“ ‘ಅವನು, 3,000 ಲೀಟರ್ ಎಣ್ಣೆ,’ ಎಂದನು. “ಆಗ ನಿರ್ವಾಹಕನು, ‘ನಿನ್ನ ಸಾಲ ಪತ್ರವನ್ನು ತೆಗೆದುಕೋ, ಬೇಗ ಕುಳಿತುಕೊಂಡು 1,500 ಲೀಟರ್ ಎಂದು ಬರೆ,’ ಎಂದು ಹೇಳಿದನು.</verse>
				<verse number="7">“ಬಳಿಕ ಅವನು ಮತ್ತೊಬ್ಬನಿಗೆ, ‘ನೀನೆಷ್ಟು ಸಾಲ ತೀರಿಸಬೇಕು,’ ಎಂದು ಕೇಳಲು, “30 ‘ಟನ್ ಗೋಧಿ,’ ಎಂದನು. “ಆಗ ಅವನು, ‘ನಿನ್ನ ಸಾಲ ಪತ್ರವನ್ನು ತೆಗೆದುಕೊಂಡು 24 ಟನ್ ಎಂದು ಬರೆ,’ ಎಂದನು.</verse>
				<verse number="8">“ಆಗ ಯಜಮಾನನು ಆ ಅಪನಂಬಿಗಸ್ತ ನಿರ್ವಾಹಕನು ಕುಯುಕ್ತಿಯಿಂದ ಮಾಡಿದ್ದನ್ನು ಹೊಗಳಿದನು. ಯೇಸು ಮುಂದುವರಿಸಿ ಹೇಳಿದ್ದು: ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಯುಕ್ತಿಯುಳ್ಳವರಾಗಿದ್ದಾರೆ.</verse>
				<verse number="9">ನಾನು ನಿಮಗೆ ಹೇಳುವುದೇನೆಂದರೆ, ಲೌಕಿಕ ಸಂಪತ್ತಿನಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಅದು ನಿಮ್ಮನ್ನು ಬಿಟ್ಟುಹೋದಾಗ ನಿಮ್ಮನ್ನು ನಿತ್ಯ ನಿವಾಸಗಳಲ್ಲಿ ಸೇರಿಸಿಕೊಳ್ಳುವರು.</verse>
				<verse number="10">“ಸ್ವಲ್ಪವಾದದ್ದರಲ್ಲಿ ನಂಬಿಗಸ್ತರಾಗಿರುವವರು ಬಹಳವಾದದ್ದರಲ್ಲಿಯೂ ನಂಬಿಗಸ್ತರಾಗಿರುವರು ಮತ್ತು ಸ್ವಲ್ಪವಾದದ್ದರಲ್ಲಿ ಅಪನಂಬಿಗಸ್ತರಾಗಿರುವವರು ಬಹಳವಾದದ್ದರಲ್ಲಿಯೂ ಅಪನಂಬಿಗಸ್ತರಾಗಿರುವರು.</verse>
				<verse number="11">ಆದ್ದರಿಂದ ಲೌಕಿಕ ಸಂಪತ್ತಿನ ವಿಷಯದಲ್ಲಿ ನೀವು ನಂಬಿಗಸ್ತರಾಗಿ ಇರದಿದ್ದರೆ, ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು?</verse>
				<verse number="12">ಮತ್ತೊಬ್ಬರಿಗೆ ಸೇರಿದ ವಸ್ತುಗಳಲ್ಲಿ ನೀವು ನಂಬಿಗಸ್ತರಾಗಿ ಇರದಿದ್ದರೆ ನಿಮ್ಮ ಪಾಲನ್ನು ನಿಮಗೆ ಯಾರು ಒಪ್ಪಿಸುವರು?</verse>
				<verse number="13">“ಯಾವ ಸೇವಕನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು. ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು. ನೀವು ದೇವರಿಗೂ ಧನಕ್ಕೂ ಸೇವೆ ಮಾಡಲಾರಿರಿ,” ಎಂದರು.</verse>
				<verse number="14">ಆಗ ಹಣದಾಶೆಯಿಂದ ಕೂಡಿದ ಫರಿಸಾಯರು, ಇವುಗಳನ್ನು ಕೇಳಿ ಯೇಸುವನ್ನು ಪರಿಹಾಸ್ಯ ಮಾಡಿದರು.</verse>
				<verse number="15">ಯೇಸು ಅವರಿಗೆ, “ನೀವು ಮನುಷ್ಯರ ಮುಂದೆ ನೀತಿಕರಿಸಿಕೊಳ್ಳುವವರು, ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾರೆ. ಮನುಷ್ಯರಲ್ಲಿ ಶ್ರೇಷ್ಠವೆಂದು ಎಣಿಸಿಕೊಳ್ಳುವಂಥದ್ದು ದೇವರ ದೃಷ್ಟಿಯಲ್ಲಿ ಅದು ಅಸಹ್ಯವಾಗಿದೆ.</verse>
				<verse number="16">“ಮೋಶೆಯ ನಿಯಮವೂ ಪ್ರವಾದನೆಗಳೂ ಯೋಹಾನನವರೆಗೆ ಇದ್ದವು. ಅಂದಿನಿಂದ, ದೇವರ ರಾಜ್ಯವು ಸಾರಲಾಗಿದೆ. ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಿದ್ದಾನೆ.</verse>
				<verse number="17">ನಿಯಮದ ಒಂದು ಚುಕ್ಕೆಯು ಬಿದ್ದುಹೋಗುವುದಕ್ಕಿಂತ ಆಕಾಶವೂ ಭೂಮಿಯೂ ಅಳಿದುಹೋಗುವುದು ಸುಲಭ.</verse>
				<verse number="18">“ಯಾವನಾದರೂ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ. ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುವವನಾಗಿದ್ದಾನೆ.”</verse>
				<verse number="19">ಅನಂತರ ಯೇಸು ಹೀಗೆ ಒಂದು ಸಾಮ್ಯ ಹೇಳಿದರು, “ಬಹು ಬೆಲೆಬಾಳುವ ಹಾಗೂ ನಯವಾದ ನಾರುಮಡಿ ವಸ್ತ್ರಗಳನ್ನೂ ಧರಿಸಿಕೊಂಡು ಪ್ರತಿದಿನವೂ ಭೋಗಗಳಲ್ಲಿಯೂ ಆಡಂಭರದಲ್ಲಿಯೂ ಬಾಳುತ್ತಿದ್ದ ಒಬ್ಬ ಧನವಂತನಿದ್ದನು.</verse>
				<verse number="20">ಅವನ ಬಾಗಿಲಲ್ಲಿ, ಮೈತುಂಬಾ ಹುಣ್ಣುಗಳಿದ್ದ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದಿರುತ್ತಿದ್ದನು.</verse>
				<verse number="21">ಧನವಂತನ ಮೇಜಿನಿಂದ ಬೀಳುವ ರೊಟ್ಟಿತುಂಡುಗಳನ್ನು ತಿನ್ನುವುದಕ್ಕೆ ಆ ಲಾಜರನು ಹಂಬಲಿಸುತ್ತಿದ್ದನು. ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.</verse>
				<verse number="22">“ಒಂದು ದಿನ ಆ ಭಿಕ್ಷುಕನು ಸತ್ತುಹೋದನು. ದೇವದೂತರು ಅವನನ್ನು ಅಬ್ರಹಾಮನ ಬಳಿಗೆ ತೆಗೆದುಕೊಂಡು ಹೋದರು. ಧನವಂತನು ಸಹ ಸತ್ತುಹೋದನು. ಅವನಿಗೆ ಶವಸಂಸ್ಕಾರವಾಯಿತು.</verse>
				<verse number="23">ಅವನು ಪಾತಾಳದಲ್ಲಿ, ಯಾತನೆಪಡುತ್ತಾ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಲ್ಲಿ ಅಬ್ರಹಾಮನನ್ನೂ, ಅವನ ಎದೆಗೆ ಒರಗಿಕೊಂಡಿದ್ದ ಲಾಜರನನ್ನೂ ಕಂಡನು.</verse>
				<verse number="24">ಆಗ ಧನವಂತನು, ‘ತಂದೆಯೇ ಅಬ್ರಹಾಮನೇ, ನನ್ನನ್ನು ಕರುಣಿಸು. ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ, ನನ್ನ ನಾಲಿಗೆಯನ್ನು ತಣ್ಣಗೆ ಮಾಡಲು ಅವನನ್ನು ಕಳುಹಿಸು, ಈ ಅಗ್ನಿಜ್ವಾಲೆಯಲ್ಲಿ ಯಾತನೆಪಡುತ್ತಿದ್ದೇನೆ,’ ಎಂದು ಕೂಗಿ ಹೇಳಿದನು.</verse>
				<verse number="25">“ಆದರೆ ಅಬ್ರಹಾಮನು, ‘ಮಗನೇ, ನೀನು ನಿನ್ನ ಜೀವಮಾನದಲ್ಲಿ ಒಳ್ಳೆಯವುಗಳನ್ನು ಹೊಂದಿದೆಯಲ್ಲಾ, ಲಾಜರನು ಕೆಟ್ಟವುಗಳನ್ನು ಅನುಭವಿಸಿದ್ದನ್ನು ನೆನಪಿಗೆ ತಂದುಕೋ, ಈಗ ಅವನು ಆದರಣೆ ಹೊಂದುತ್ತಿದ್ದಾನೆ. ನೀನು ಯಾತನೆಪಡುತ್ತಿದ್ದೀ.</verse>
				<verse number="26">ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಂತರ ಸ್ಥಾಪಿಸಿದೆ,’ ಎಂದನು.</verse>
				<verse number="27">“ಆಗ ಅವನು, ‘ಅಪ್ಪಾ, ಹಾಗಾದರೆ ನೀನು ಲಾಜರನನ್ನು ನನ್ನ ತಂದೆಯ ಮನೆಗೆ ಕಳುಹಿಸಬೇಕೆಂದು ನಾನು ಬೇಡಿಕೊಳ್ಳುತ್ತೇನೆ.</verse>
				<verse number="28">ನನಗೆ ಐದು ಮಂದಿ ಸಹೋದರರಿದ್ದಾರೆ. ಅವರೂ ಈ ಯಾತನೆಯ ಸ್ಥಳಕ್ಕೆ ಬಾರದ ಹಾಗೆ ಲಾಜರನು ಅವರನ್ನು ಎಚ್ಚರಿಸಲಿ,’ ಎಂದನು.</verse>
				<verse number="29">“ಅದಕ್ಕೆ ಅಬ್ರಹಾಮನು ಅವನಿಗೆ, ‘ಅವರಿಗೆ ಮೋಶೆಯ ಮತ್ತು ಪ್ರವಾದಿಗಳ ಗ್ರಂಥಗಳಿವೆ; ಅದರಲ್ಲಿರುವುದಕ್ಕೆ ಅವರು ಕಿವಿಗೊಡಲಿ,’ ಎಂದನು.</verse>
				<verse number="30">“ಆಗ ಅವನು, ‘ಹಾಗಲ್ಲ, ತಂದೆ ಅಬ್ರಹಾಮನೇ, ಸತ್ತವರೊಳಗಿಂದ ಒಬ್ಬನು ಜೀವಂತವಾಗಿ ಅವರ ಬಳಿಗೆ ಹೋದರೆ, ಅವರು ಪಶ್ಚಾತ್ತಾಪ ಪಡುವರು,’ ಎಂದನು.</verse>
				<verse number="31">“ಅದಕ್ಕೆ ಅಬ್ರಹಾಮನು ಅವನಿಗೆ, ‘ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನೇ ಅವರು ಕೇಳದೆ ಹೋದರೆ, ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವುದಿಲ್ಲ,’ ಎಂದು ಹೇಳಿದನು.”</verse>
			</chapter>
			<chapter number="17">
				<verse number="1">ಯೇಸು ತಮ್ಮ ಶಿಷ್ಯರಿಗೆ: “ಜನರಿಗೆ ಪಾಪದ ಶೋಧನೆಗಳು ಬಂದೇ ಬರುತ್ತವೆ, ಆದರೆ ಅವು ಯಾರಿಂದ ಬರುತ್ತವೋ ಅವರಿಗೆ ಕಷ್ಟ.</verse>
				<verse number="2">ಅಂಥವರು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಕ್ಕೆ ನಡೆಸುವುದಕ್ಕಿಂತ ಅವರ ಕೊರಳಿಗೆ ಬೀಸುವ ಕಲ್ಲನ್ನು ನೇತುಹಾಕಿ ಅವರನ್ನು ಸಮುದ್ರದೊಳಗೆ ಬಿಸಾಡುವುದು ಉತ್ತಮವಾಗಿರುವುದು.</verse>
				<verse number="3">ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಿಂದಿರಿ. “ನಿನ್ನ ಸಹೋದರನು ಅಥವಾ ಸಹೋದರಿ ನಿನಗೆ ವಿರೋಧವಾಗಿ ಪಾಪಮಾಡಿದರೆ, ಅವರನ್ನು ಗದರಿಸು; ಅವರು ಪಶ್ಚಾತ್ತಾಪಪಟ್ಟರೆ, ಅವರನ್ನು ಕ್ಷಮಿಸು.</verse>
				<verse number="4">ಅವರು ಒಂದು ದಿನದಲ್ಲಿ ಏಳು ಸಾರಿ ಪಾಪಮಾಡಿ, ಏಳು ಸಾರಿಯೂ ನಿನ್ನ ಬಳಿಗೆ ಬಂದು, ‘ನಾನು ಪಶ್ಚಾತ್ತಾಪಪಡುತ್ತೇನೆ,’ ಎಂದು ಹೇಳಿದರೆ ನೀನು ಅವರನ್ನು ಕ್ಷಮಿಸಬೇಕು,” ಎಂದರು.</verse>
				<verse number="5">ಆಗ ಅಪೊಸ್ತಲರು ಕರ್ತದೇವರಿಗೆ, “ನಮ್ಮ ವಿಶ್ವಾಸವನ್ನು ಹೆಚ್ಚಿಸಿರಿ,” ಎಂದರು.</verse>
				<verse number="6">ಅದಕ್ಕೆ ಯೇಸು, “ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ, ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ,’ ಎಂದು ಹೇಳುವುದಾದರೆ ಅದು ನಿಮಗೆ ವಿಧೇಯವಾಗುವುದು.</verse>
				<verse number="7">“ನಿಮ್ಮಲ್ಲಿ ಯಾವನಿಗಾದರೂ ಒಬ್ಬ ಕೆಲಸದವನಿರಲಾಗಿ, ಅವನು ಹೊಲದ ಕೆಲಸ ಅಥವಾ ಕುರಿ ಮೇಯಿಸಿ ಮನೆಗೆ ಬಂದ ಕೂಡಲೇ ಯಜಮಾನನು ಕೆಲಸದವನಿಗೆ, ‘ಬಾ ಊಟಕ್ಕೆ ಕುಳಿತುಕೋ,’ ಎಂದು ಹೇಳುವುದುಂಟೇ?</verse>
				<verse number="8">ಹಾಗೆ ಹೇಳದೆ, ‘ನೀನು ಊಟ ತಯಾರುಮಾಡಿ, ನೀನೂ ಸಿದ್ಧವಾಗಿ, ನಾನು ತಿಂದು ಕುಡಿಯುವ ತನಕ ನನ್ನ ಸೇವೆಮಾಡು; ಆಮೇಲೆ ನೀನು ಊಟಮಾಡು,’ ಎಂದು ಅವನಿಗೆ ಹೇಳುವಿರಲ್ಲವೇ?</verse>
				<verse number="9">ತನಗೆ ಅಪ್ಪಣೆ ಕೊಟ್ಟವುಗಳನ್ನು ಆ ಕೆಲಸದವನು ಮಾಡಿದ್ದಕ್ಕೆ ಯಜಮಾನನು ಅವನಿಗೆ ಕೃತಜ್ಞತೆ ಸಲ್ಲಿಸುವನೋ?</verse>
				<verse number="10">ಅದೇ ರೀತಿಯಾಗಿ, ನಿಮಗೆ ಆಜ್ಞಾಪಿಸಿದವುಗಳನ್ನೆಲ್ಲಾ ನೀವು ಮಾಡಿದ ಮೇಲೆ, ‘ನಾವು ಅಯೋಗ್ಯರಾದ ಆಳುಗಳಷ್ಟೇ, ನಾವು ಮಾಡಬೇಕಾದ ಕರ್ತವ್ಯವನ್ನೇ ಮಾಡಿದ್ದೇವೆ ಎಂದು ನೀವು ಹೇಳಿರಿ,’ ” ಎಂದು ಹೇಳಿದರು.</verse>
				<verse number="11">ಯೇಸು ಯೆರೂಸಲೇಮಿಗೆ ಹೋಗುತ್ತಿರುವಾಗ, ಸಮಾರ್ಯ ಮತ್ತು ಗಲಿಲಾಯ ಪ್ರಾಂತಗಳ ಮಧ್ಯದಲ್ಲಿದ್ದ ಹಳ್ಳಿಯ ಮಾರ್ಗವಾಗಿ ಪ್ರಯಾಣಮಾಡಿದರು.</verse>
				<verse number="12">ಯೇಸು ಒಂದು ಹಳ್ಳಿಯನ್ನು ಪ್ರವೇಶಿಸಿದಾಗ, ಹತ್ತು ಮಂದಿ ಕುಷ್ಠರೋಗಿಗಳು ಯೇಸುವಿನ ಕಡೆಗೆ ಬಂದು ದೂರದಲ್ಲಿ ನಿಂತುಕೊಂಡು,</verse>
				<verse number="13">“ಯೇಸುವೇ, ಗುರುವೇ, ನಮ್ಮನ್ನು ಕರುಣಿಸು!” ಎಂದು ತಮ್ಮ ಧ್ವನಿಯೆತ್ತಿ ಕೂಗಿದರು.</verse>
				<verse number="14">ಯೇಸು ಅವರನ್ನು ನೋಡಿ, “ಹೋಗಿ, ಯಾಜಕರಿಗೆ ನಿಮ್ಮನ್ನು ತೋರಿಸಿಕೊಳ್ಳಿರಿ,” ಎಂದರು. ಅವರು ಹೋಗುತ್ತಿರುವಾಗಲೇ ಸ್ವಸ್ಥರಾದರು.</verse>
				<verse number="15">ಅವರಲ್ಲಿ ಒಬ್ಬನು, ತಾನು ಸ್ವಸ್ಥವಾದದ್ದನ್ನು ಕಂಡು, ಮಹಾಶಬ್ದದಿಂದ ದೇವರನ್ನು ಮಹಿಮೆಪಡಿಸುತ್ತಾ ಹಿಂದಿರುಗಿ ಬಂದು,</verse>
				<verse number="16">ಯೇಸುವಿನ ಪಾದಕ್ಕೆ ಅಡ್ಡಬಿದ್ದು, ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದನು. ಅವನೋ ಸಮಾರ್ಯದವನಾಗಿದ್ದನು.</verse>
				<verse number="17">ಯೇಸು ಅವನಿಗೆ, “ಆ ಎಲ್ಲಾ ಹತ್ತು ಮಂದಿ ಸ್ವಸ್ಥರಾದರಲ್ಲವೆ? ಉಳಿದ ಒಂಬತ್ತು ಮಂದಿ ಎಲ್ಲಿ?</verse>
				<verse number="18">ದೇವರನ್ನು ಮಹಿಮೆಪಡಿಸುವುದಕ್ಕೆ ಈ ವಿದೇಶಿಯೇ ಹೊರತು ಯಾರೂ ಹಿಂದಿರುಗಲಿಲ್ಲವೇ?”</verse>
				<verse number="19">ಎಂದು ಹೇಳಿ ಅವನಿಗೆ, “ಎದ್ದು ಹೋಗು; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು.</verse>
				<verse number="20">ಒಂದು ದಿನ, ದೇವರ ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಯೇಸುವನ್ನು ಕೇಳಲು, ಅವರಿಗೆ ಉತ್ತರವಾಗಿ ಯೇಸು, “ದೇವರ ರಾಜ್ಯವು ಪ್ರತ್ಯಕ್ಷವಾಗಿ ಬರುವುದಿಲ್ಲ,</verse>
				<verse number="21">‘ಇಗೋ ಇಲ್ಲಿದೆ,’ ಇಲ್ಲವೆ ‘ಅಗೋ ಅಲ್ಲಿದೆ,’ ಎಂದು ಹೇಳುವುದಕ್ಕಾಗುವುದಿಲ್ಲ ಏಕೆಂದರೆ ದೇವರ ರಾಜ್ಯವು ನಿಮ್ಮ ನಡುವೆ ಇದೆ, ” ಎಂದರು.</verse>
				<verse number="22">ಯೇಸು ತಮ್ಮ ಶಿಷ್ಯರಿಗೆ, “ಮನುಷ್ಯಪುತ್ರನಾದ ನನ್ನ ದಿವಸಗಳಲ್ಲಿ ಒಂದನ್ನು ಕಾಣಬೇಕೆಂದು ನೀವು ಬಯಸುವ ಕಾಲ ಬರುತ್ತದೆ, ಆದರೂ ನೀವು ಅದನ್ನು ಕಾಣುವುದಿಲ್ಲ.</verse>
				<verse number="23">ಜನರು ನಿಮಗೆ, ‘ಇಲ್ಲಿ ಇದ್ದಾನೆ!’ ಇಲ್ಲವೆ, ‘ಅಲ್ಲಿ ಇದ್ದಾನೆ’ ಎಂದು ಹೇಳಿದರೆ ಅವರ ಹಿಂದೆ ಓಡಬೇಡಿರಿ.</verse>
				<verse number="24">ಏಕೆಂದರೆ ಮಿಂಚು ಆಕಾಶದ ಒಂದು ಭಾಗದಲ್ಲಿ ಮಿಂಚಿ ಮತ್ತೊಂದು ಭಾಗದಲ್ಲಿ ಹೇಗೆ ಹೊಳೆಯುತ್ತದೆಯೋ ಹಾಗೆಯೇ ಮನುಷ್ಯಪುತ್ರನಾದ ನಾನು ಬರುವ ದಿನದಲ್ಲಿ ಕಾಣಿಸಿಕೊಳ್ಳುವೆನು.</verse>
				<verse number="25">ಆದರೆ ನಾನು ಮೊದಲು ಅನೇಕ ಕಷ್ಟಗಳನ್ನು ಅನುಭವಿಸಿ ಈ ಸಂತತಿಯವರಿಂದ ತಿರಸ್ಕಾರ ಹೊಂದುವುದು ಅಗತ್ಯವಾಗಿದೆ.</verse>
				<verse number="26">“ನೋಹನ ದಿವಸಗಳು ಇದ್ದಂತೆಯೇ, ಅದೇ ರೀತಿಯಲ್ಲಿ ಮನುಷ್ಯಪುತ್ರನಾದ ನನ್ನ ದಿವಸಗಳಲ್ಲಿಯೂ ಇರುವುದು.</verse>
				<verse number="27">ನೋಹನು ನಾವೆಯಲ್ಲಿ ಸೇರಿದ ದಿನದವರೆಗೂ ಅವರು ತಿನ್ನುತ್ತಾ, ಕುಡಿಯುತ್ತಾ, ಮದುವೆ ಮಾಡಿಕೊಳ್ಳುತ್ತಾ, ಮದುವೆ ಮಾಡಿಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ನಾವೆಯ ಹೊರಗಡೆ ಇದ್ದವರೆಲ್ಲರನ್ನು ನಾಶಮಾಡಿತು.</verse>
				<verse number="28">“ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು. ಜನರೆಲ್ಲರೂ ತಿನ್ನುತ್ತಿದ್ದರು, ಕುಡಿಯುತ್ತಿದ್ದರು, ಕೊಂಡುಕೊಳ್ಳುತ್ತಿದ್ದರು, ಮಾರುತ್ತಿದ್ದರು, ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.</verse>
				<verse number="29">ಆದರೆ ಲೋಟನು ಸೊದೋಮಿನಿಂದ ತೆರಳಿದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಮಾಡಿತು.</verse>
				<verse number="30">“ಮನುಷ್ಯಪುತ್ರನಾದ ನನ್ನ ಪ್ರತ್ಯಕ್ಷತೆಯ ದಿನದಲ್ಲಿಯೂ ಹಾಗೆ ಇರುವುದು.</verse>
				<verse number="31">ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು, ಮನೆಯಲ್ಲಿದ್ದ ತನ್ನ ವಸ್ತುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬರಬಾರದು. ಹಾಗೆಯೇ, ಹೊಲದಲ್ಲಿದ್ದವನು ಹಿಂದಿರುಗಿ ಬರಬಾರದು.</verse>
				<verse number="32">ಲೋಟನ ಹೆಂಡತಿಯನ್ನು ಜ್ಞಾಪಕಮಾಡಿಕೊಳ್ಳಿರಿ!</verse>
				<verse number="33">ಯಾರು ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕೆ ಪ್ರಯತ್ನಿಸುವರೋ ಅವರು ಅದನ್ನು ಕಳೆದುಕೊಳ್ಳುವರು ಮತ್ತು ಯಾರು ತಮ್ಮ ಪ್ರಾಣವನ್ನು ಕಳೆದುಕೊಳ್ಳುವರೋ ಅವರು ಅದನ್ನು ಕಾಪಾಡಿಕೊಳ್ಳುವರು.</verse>
				<verse number="34">ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆಯಲ್ಲಿ ಇರುವರು; ಒಬ್ಬನನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬನನ್ನು ಬಿಡಲಾಗುವುದು.</verse>
				<verse number="35">ಇಬ್ಬರು ಹೆಂಗಸರು ಜೊತೆಯಾಗಿ ಕಾಳುಬೀಸುತ್ತಿರುವರು; ಒಬ್ಬಳನ್ನು ತೆಗೆದುಕೊಳ್ಳಲಾಗುವುದು, ಮತ್ತೊಬ್ಬಳನ್ನು ಬಿಡಲಾಗುವುದು.</verse>
				<verse number="36">ಇಬ್ಬರು ಹೊಲದಲ್ಲಿರುವರು. ಒಬ್ಬರನ್ನು ತೆಗೆದುಕೊಳ್ಳಲಾಗುವುದು ಮತ್ತೊಬ್ಬರನ್ನು ಬಿಡಲಾಗುವುದು, ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.</verse>
				<verse number="37">ಅವರು ಯೇಸುವಿಗೆ, “ಕರ್ತದೇವರೇ, ಇದು ಎಲ್ಲಿ ನಡೆಯುವುದು?” ಎಂದು ಕೇಳಲು ಯೇಸು ಅವರಿಗೆ, “ಹೆಣ ಎಲ್ಲಿದೆಯೋ, ಅಲ್ಲಿ ಹದ್ದುಗಳು ಬಂದು ಸೇರುತ್ತವೆ,” ಎಂದರು.</verse>
			</chapter>
			<chapter number="18">
				<verse number="1">ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತಮ್ಮ ಶಿಷ್ಯರಿಗೆ ಒಂದು ಸಾಮ್ಯವನ್ನು ಹೇಳಿದರು.</verse>
				<verse number="2">“ಒಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೂ ಭಯಪಡುತ್ತಿರಲಿಲ್ಲ ಮನುಷ್ಯರಿಗೂ ಲಕ್ಷ್ಯಕೊಡುತ್ತಿರಲಿಲ್ಲ.</verse>
				<verse number="3">ಅದೇ ಪಟ್ಟಣದಲ್ಲಿ ಒಬ್ಬ ವಿಧವೆಯಿದ್ದಳು. ಆಕೆ ಪದೇಪದೇ ಅವನ ಬಳಿಗೆ ಬಂದು, ‘ನನ್ನ ವಿರೋಧಿಯ ಎದುರಾಗಿ ನನಗೆ ನ್ಯಾಯ ದೊರಕಿಸಿಕೊಡು,’ ಎಂದು ಕೇಳಿಕೊಳ್ಳುತ್ತಿದ್ದಳು.</verse>
				<verse number="4">“ಅವನು ಸ್ವಲ್ಪಕಾಲ ಆಕೆಗೆ ಗಮನಕೊಡಲಿಲ್ಲ. ತರುವಾಯ ಅವನು ತನ್ನೊಳಗೆ, ‘ನಾನು ದೇವರಿಗೆ ಭಯಪಡುವುದಿಲ್ಲ ಹಾಗೂ ಮನುಷ್ಯರಿಗೂ ಲಕ್ಷ್ಯಕೊಡುವುದಿಲ್ಲ,</verse>
				<verse number="5">ಆದರೂ ಈ ವಿಧವೆಯು ನನಗೆ ತೊಂದರೆಕೊಟ್ಟು ಪದೇಪದೇ ನನ್ನ ಬಳಿಗೆ ಬಂದು, ನನ್ನನ್ನು ಕಾಡಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು,’ ” ಎಂದುಕೊಂಡನು.</verse>
				<verse number="6">ಅನಂತರ ಕರ್ತದೇವರು, “ಈ ಅನ್ಯಾಯಗಾರನಾದ ನ್ಯಾಯಾಧಿಪತಿಯು ಹೇಳಿಕೊಂಡಿದ್ದನ್ನು ಕೇಳಿರಿ.</verse>
				<verse number="7">ದೇವರಾದುಕೊಂಡವರು ದೇವರಿಗೆ ಹಗಲುರಾತ್ರಿ ಮೊರೆಯಿಡುವಾಗ, ದೇವರು ಅವರ ವಿಷಯದಲ್ಲಿ ಅವರಿಗೆ ನ್ಯಾಯವನ್ನು ಕೊಡದೆ ಇರುವರೋ? ದೇವರು ನ್ಯಾಯ ಕೊಡಲು ತಡಮಾಡುವರೋ?</verse>
				<verse number="8">ದೇವರು ಬೇಗನೇ ಅವರಿಗೆ ನ್ಯಾಯತೀರಿಸುವರೆಂದು, ನಾನು ನಿಮಗೆ ಹೇಳುತ್ತೇನೆ. ಆದರೂ, ಮನುಷ್ಯಪುತ್ರನಾದ ನಾನು ಬಂದಾಗ ಭೂಮಿಯ ಮೇಲೆ ವಿಶ್ವಾಸವನ್ನು ಕಾಣುವೆನೋ?” ಎಂದರು.</verse>
				<verse number="9">ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸೆಯನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ, ಯೇಸು ಈ ಸಾಮ್ಯವನ್ನು ಹೇಳಿದರು:</verse>
				<verse number="10">“ಇಬ್ಬರು ಪ್ರಾರ್ಥನೆಮಾಡುವುದಕ್ಕೆ ದೇವಾಲಯಕ್ಕೆ ಹೋದರು. ಅವರಲ್ಲಿ ಒಬ್ಬನು ಫರಿಸಾಯನು ಮತ್ತೊಬ್ಬನು ಸುಂಕದವನು.</verse>
				<verse number="11">ಫರಿಸಾಯನು ನಿಂತುಕೊಂಡು: ‘ದೇವರೇ, ಸುಲಿಗೆ ಮಾಡುವವರು, ಅನೀತಿವಂತರು, ವ್ಯಭಿಚಾರಿಗಳು ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ನಾನಲ್ಲ. ಆದ್ದರಿಂದ ನಾನು ನಿನಗೆ ಸ್ತೋತ್ರ ಮಾಡುತ್ತೇನೆ.</verse>
				<verse number="12">ನಾನು ವಾರಕ್ಕೆ ಎರಡು ಸಾರಿ ಉಪವಾಸ ಮಾಡುತ್ತೇನೆ. ನನಗಿರುವ ಎಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ,’ ಎಂದು ಹೇಳಿ ತನಗೆ ತಾನೇ ಪ್ರಾರ್ಥಿಸಿದನು.</verse>
				<verse number="13">“ಆದರೆ ಸುಂಕದವನು ದೂರದಲ್ಲಿ ನಿಂತು, ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಧೈರ್ಯಗೊಳ್ಳದೇ ತನ್ನ ಎದೆಯನ್ನು ಬಡಿದುಕೊಳ್ಳುತ್ತಾ, ‘ದೇವರೇ ಪಾಪಿಯಾದವನು ನಾನೇ ನನ್ನನ್ನು ಕರುಣಿಸು,’ ಎಂದು ಪ್ರಾರ್ಥಿಸಿದನು.</verse>
				<verse number="14">“ನಾನು ನಿಮಗೆ ಹೇಳುತ್ತೇನೆ, ಅವನಲ್ಲ, ಇವನೇ ನೀತಿವಂತನೆಂಬ ನಿರ್ಣಯ ಪಡೆದವನಾಗಿ ತನ್ನ ಮನೆಗೆ ಹೋದನು. ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.</verse>
				<verse number="15">ಚಿಕ್ಕಮಕ್ಕಳನ್ನು ಯೇಸು ಮುಟ್ಟುವಂತೆ ಕೆಲವರು ಚಿಕ್ಕಮಕ್ಕಳನ್ನು ಅವರ ಬಳಿಗೆ ತಂದರು ಆಗ ಅವರ ಶಿಷ್ಯರು ಇದನ್ನು ಕಂಡು, ಜನರನ್ನು ಗದರಿಸಿದರು.</verse>
				<verse number="16">ಆದರೆ ಯೇಸುವೋ ಚಿಕ್ಕಮಕ್ಕಳನ್ನು ತಮ್ಮ ಹತ್ತಿರಕ್ಕೆ ಆಹ್ವಾನಿಸಿ ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿರಿ. ಅವುಗಳಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ದೇವರ ರಾಜ್ಯವು ಇಂಥವರದೇ.</verse>
				<verse number="17">ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾರಾದರೂ ಚಿಕ್ಕಮಗುವಿನಂತೆ ದೇವರ ರಾಜ್ಯವನ್ನು ಸ್ವೀಕರಿಸದಿದ್ದರೆ, ಅವರು ಅದರೊಳಗೆ ಸೇರುವುದೇ ಇಲ್ಲ,” ಎಂದರು.</verse>
				<verse number="18">ಒಬ್ಬ ಅಧಿಕಾರಿಯು ಯೇಸುವಿಗೆ, “ಒಳ್ಳೆಯ ಬೋಧಕರೇ, ನಾನು ನಿತ್ಯಜೀವವನ್ನು ಪ್ರಾಪ್ತಿಮಾಡಿಕೊಳ್ಳುವುದಕ್ಕೆ ಏನು ಮಾಡಬೇಕು?” ಎಂದು ಕೇಳಿದನು.</verse>
				<verse number="19">ಅದಕ್ಕೆ ಯೇಸು ಅವನಿಗೆ, “ನೀನು ನನ್ನನ್ನು ಒಳ್ಳೆಯವನೆಂದು ಏಕೆ ಕರೆಯುತ್ತಿ? ದೇವರೊಬ್ಬರೇ ಹೊರತು ಬೇರೆ ಯಾರೂ ಒಳ್ಳೆಯವರಲ್ಲ.</verse>
				<verse number="20">‘ವ್ಯಭಿಚಾರ ಮಾಡಬಾರದು, ನರಹತ್ಯೆ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು,’ ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆಯಲ್ಲಾ,” ಎಂದರು.</verse>
				<verse number="21">ಅದಕ್ಕವನು, “ನನ್ನ ಬಾಲ್ಯದಿಂದಲೇ ನಾನು ಇವೆಲ್ಲವನ್ನೂ ಕೈಕೊಂಡಿದ್ದೇನೆ,” ಎಂದು ಹೇಳಿದನು.</verse>
				<verse number="22">ಯೇಸು ಇವುಗಳನ್ನು ಕೇಳಿ ಅವನಿಗೆ, “ಆದರೂ ನಿನಗೆ ಒಂದು ಕೊರತೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.</verse>
				<verse number="23">ಅವನು ಇದನ್ನು ಕೇಳಿ, ಬಹಳ ದುಃಖವುಳ್ಳವನಾದನು. ಏಕೆಂದರೆ ಅವನು ಬಹಳ ಸಿರಿವಂತನಾಗಿದ್ದನು.</verse>
				<verse number="24">ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ಕಂಡು, “ಐಶ್ವರ್ಯವಂತರು ದೇವರ ರಾಜ್ಯದಲ್ಲಿ ಸೇರುವುದು ಎಷ್ಟೋ ಕಷ್ಟ!</verse>
				<verse number="25">ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವುದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವುದು ಸುಲಭ,” ಎಂದು ಹೇಳಿದರು.</verse>
				<verse number="26">ಇದನ್ನು ಕೇಳಿದವರು, “ಹಾಗಾದರೆ ಯಾರು ರಕ್ಷಣೆ ಹೊಂದುವವರು?” ಎಂದರು.</verse>
				<verse number="27">ಅದಕ್ಕೆ ಯೇಸು, “ಮನುಷ್ಯರಿಗೆ ಅಸಾಧ್ಯವಾದವುಗಳು ದೇವರಿಗೆ ಸಾಧ್ಯವಾಗಿವೆ,” ಎಂದು ಹೇಳಿದರು.</verse>
				<verse number="28">ಆಗ ಪೇತ್ರನು, “ಇಗೋ, ನಾವು ಎಲ್ಲವನ್ನೂ ಬಿಟ್ಟು ನಿಮ್ಮನ್ನು ಹಿಂಬಾಲಿಸಿದ್ದೇವಲ್ಲ,” ಎಂದನು.</verse>
				<verse number="29">ಯೇಸು ಅವರಿಗೆ, “ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ, ಮನೆಯನ್ನಾದರೂ ಹೆಂಡತಿಯನ್ನಾದರೂ ಸಹೋದರರನ್ನಾದರೂ ತಂದೆತಾಯಿಗಳನ್ನಾದರೂ ಮಕ್ಕಳನ್ನಾದರೂ ದೇವರ ರಾಜ್ಯಕ್ಕೋಸ್ಕರ ಬಿಟ್ಟುಬಿಡುವವನು,</verse>
				<verse number="30">ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಕಾಲದಲ್ಲಿ ನಿತ್ಯಜೀವವನ್ನೂ ಹೊಂದುವನು,” ಎಂದರು.</verse>
				<verse number="31">ಯೇಸು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ, “ಇಗೋ, ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ, ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಪ್ರವಾದಿಗಳಿಂದ ಬರೆದಿರುವುದೆಲ್ಲವೂ ನೆರವೇರಬೇಕು.</verse>
				<verse number="32">ನಾನು ಯೆಹೂದ್ಯರಲ್ಲದವರ ಕೈಗೆ ಸೆರೆಯಾಗುವೆನು. ಅವರು ನನ್ನನ್ನು ಹಾಸ್ಯಮಾಡಿ, ನನಗೆ ಅವಮಾನ ಮಾಡಿ, ನನ್ನ ಮೇಲೆ ಉಗುಳುವರು.</verse>
				<verse number="33">ಇದಲ್ಲದೆ ಅವರು ನನ್ನನ್ನು ಕೊರಡೆಗಳಿಂದ ಹೊಡೆದು, ಕೊಂದುಹಾಕುವರು. ಆದರೆ ನಾನು ಮೂರನೆಯ ದಿನ ಜೀವಿತನಾಗಿ ಎದ್ದು ಬರುವೆನು,” ಎಂದರು.</verse>
				<verse number="34">ಆದರೆ ಶಿಷ್ಯರಿಗೆ ಇವುಗಳಲ್ಲಿ ಒಂದೂ ಅರ್ಥವಾಗಲಿಲ್ಲ. ಈ ಮಾತುಗಳು ಅವರಿಗೆ ಮರೆಯಾಗಿದ್ದುದರಿಂದ, ಯೇಸು ಹೇಳಿದವುಗಳನ್ನು ಅವರು ತಿಳಿದುಕೊಳ್ಳಲಿಲ್ಲ.</verse>
				<verse number="35">ಯೇಸು ಯೆರಿಕೋವಿನ ಸಮೀಪಕ್ಕೆ ಬಂದಾಗ, ಒಬ್ಬ ಕುರುಡನು ದಾರಿಯ ಪಕ್ಕದಲ್ಲಿ ಕುಳಿತುಕೊಂಡು ಭಿಕ್ಷೆಬೇಡುತ್ತಿದ್ದನು.</verse>
				<verse number="36">ಜನಸಮೂಹವು ಹಾದು ಹೋಗುವುದನ್ನು ಇವನು ಕೇಳಿಸಿಕೊಂಡು, ಅದೇನೆಂದು ವಿಚಾರಿಸಿದನು.</verse>
				<verse number="37">“ನಜರೇತಿನ ಯೇಸು ಹಾದು ಹೋಗುತ್ತಿದ್ದಾರೆ,” ಎಂದು ಜನರು ಅವನಿಗೆ ಹೇಳಿದರು.</verse>
				<verse number="38">ಆಗ ಅವನು, “ಯೇಸುವೇ, ದಾವೀದನ ಪುತ್ರನೇ, ನನ್ನನ್ನು ಕರುಣಿಸಿ!” ಎಂದು ಗಟ್ಟಿಯಾಗಿ ಕೂಗಿಕೊಂಡನು.</verse>
				<verse number="39">ಮುಂದೆ ಹೋಗುತ್ತಿದ್ದವರು ಸುಮ್ಮನಿರುವಂತೆ ಅವನನ್ನು ಗದರಿಸಿದರು, ಆದರೂ ಅವನು, “ದಾವೀದನ ಪುತ್ರರೇ, ನನ್ನನ್ನು ಕರುಣಿಸಿ,” ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.</verse>
				<verse number="40">ಆಗ ಯೇಸು ನಿಂತು ಅವನನ್ನು ತಮ್ಮ ಬಳಿಗೆ ಕರೆತರುವಂತೆ ಅಪ್ಪಣೆಕೊಟ್ಟರು. ಅವನು ಯೇಸುವಿನ ಬಳಿಗೆ ಬಂದಾಗ, ಅವರು ಅವನಿಗೆ,</verse>
				<verse number="41">“ನನ್ನಿಂದ ನಿನಗೇನಾಗಬೇಕು?” ಎಂದು ಕೇಳಿದರು. ಅದಕ್ಕವನು, “ಕರ್ತದೇವರೇ, ನನಗೆ ದೃಷ್ಟಿ ಕೊಡಿ,” ಎಂದನು.</verse>
				<verse number="42">ಆಗ ಯೇಸು ಅವನಿಗೆ, “ನೀನು ದೃಷ್ಟಿ ಪಡೆ; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದರು.</verse>
				<verse number="43">ಕೂಡಲೇ ಅವನು ದೃಷ್ಟಿಯನ್ನು ಪಡೆದನು. ಆಗ ಅವನು ದೇವರನ್ನು ಸ್ತುತಿಸುತ್ತಾ, ಯೇಸುವನ್ನು ಹಿಂಬಾಲಿಸಿದನು. ಎಲ್ಲಾ ಜನರು ಅದನ್ನು ಕಂಡು, ದೇವರಿಗೆ ಸ್ತೋತ್ರ ಸಲ್ಲಿಸಿದರು.</verse>
			</chapter>
			<chapter number="19">
				<verse number="1">ಯೇಸು ಯೆರಿಕೋ ಪಟ್ಟಣವನ್ನು ಪ್ರವೇಶಿಸಿ ಅಲ್ಲಿಂದ ಪ್ರಯಾಣ ಮಾಡುತ್ತಿದ್ದರು.</verse>
				<verse number="2">ಅಲ್ಲಿ ಜಕ್ಕಾಯ ಎಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಸುಂಕದವರಲ್ಲಿ ಮುಖಂಡನೂ ಐಶ್ವರ್ಯವಂತನೂ ಆಗಿದ್ದನು.</verse>
				<verse number="3">ಅವನು ಯೇಸು ಯಾರೆಂದು ಕಾಣಬೇಕೆಂದು ಅಪೇಕ್ಷಿಸಿದರೂ ತಾನು ಕುಳ್ಳನಾಗಿದ್ದದರಿಂದ ಜನರ ಗುಂಪಿನ ನಿಮಿತ್ತವಾಗಿ ಅವರನ್ನು ಕಾಣಲಾರದೆ ಇದ್ದನು.</verse>
				<verse number="4">ಆಗ ಯೇಸುವನ್ನು ಕಾಣುವಂತೆ ಅವನು ಮುಂದಾಗಿ ಓಡಿಹೋಗಿ, ಒಂದು ಅತ್ತಿಮರವನ್ನು ಹತ್ತಿದನು. ಏಕೆಂದರೆ ಯೇಸು ಆ ಮಾರ್ಗವಾಗಿಯೇ ಬರುತ್ತಿದ್ದರು.</verse>
				<verse number="5">ಯೇಸು ಆ ಸ್ಥಳಕ್ಕೆ ಬಂದು, ಮೇಲಕ್ಕೆ ನೋಡಿ ಅವನಿಗೆ, “ಜಕ್ಕಾಯನೇ, ತಕ್ಷಣವೇ ಇಳಿದು ಬಾ. ನಾನು ಇಂದು ನಿನ್ನ ಮನೆಯಲ್ಲಿ ತಂಗಬೇಕು,” ಎಂದರು.</verse>
				<verse number="6">ಜಕ್ಕಾಯನು ತಕ್ಷಣವೇ ಇಳಿದುಬಂದು ಅವರನ್ನು ಸಂತೋಷದಿಂದ ಬರಮಾಡಿಕೊಂಡನು.</verse>
				<verse number="7">ಇದನ್ನು ಕಂಡವರೆಲ್ಲರೂ, “ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ,” ಎಂದು ಗೊಣಗುಟ್ಟಿದರು.</verse>
				<verse number="8">ಆದರೆ ಜಕ್ಕಾಯನು ನಿಂತುಕೊಂಡು ಕರ್ತದೇವರಿಗೆ, “ಸ್ವಾಮೀ, ಇಗೋ, ನನ್ನ ಸ್ವತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಟ್ಟುಬಿಡುತ್ತೇನೆ. ನಾನು ಯಾರಿಗಾದರೂ ಏನಾದರೂ ಮೋಸಮಾಡಿ ಅವರಿಂದ ತೆಗೆದುಕೊಂಡಿದ್ದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.</verse>
				<verse number="9">ಯೇಸು ಅವನಿಗೆ, “ಈ ದಿನವೇ ಈ ಮನೆಗೆ ರಕ್ಷಣೆ ಬಂದಿದೆ. ಏಕೆಂದರೆ ಇವನು ಸಹ ಅಬ್ರಹಾಮನ ಪುತ್ರನಲ್ಲವೇ?</verse>
				<verse number="10">ತಪ್ಪಿಹೋದದ್ದನ್ನು ಹುಡುಕಿ ರಕ್ಷಿಸುವುದಕ್ಕಲ್ಲವೇ ಮನುಷ್ಯಪುತ್ರನಾದ ನಾನು ಬಂದೆನು,” ಎಂದು ಹೇಳಿದರು.</verse>
				<verse number="11">ಜನರು ಈ ಮಾತುಗಳನ್ನು ಕೇಳುತ್ತಿರಲಾಗಿ, ಯೇಸು ತಾನು ಯೆರೂಸಲೇಮಿಗೆ ಸಮೀಪವಾಗಿದ್ದುದರಿಂದಲೂ ದೇವರ ರಾಜ್ಯವು ಕೂಡಲೇ ಪ್ರತ್ಯಕ್ಷವಾಗುವುದೆಂದು ಅವರು ಭಾವಿಸಿದ್ದರಿಂದ</verse>
				<verse number="12">ಯೇಸು ಇನ್ನೊಂದು ಸಾಮ್ಯವನ್ನು ಹೇಳಿದರು: “ಘನವಂತನಾಗಿದ್ದ ಒಬ್ಬನು ತನಗೋಸ್ಕರ ರಾಜ್ಯವನ್ನು ಪಡೆದುಕೊಂಡು ತಿರುಗಿ ಬರುವುದಕ್ಕಾಗಿ ದೂರದೇಶಕ್ಕೆ ಹೊರಟುಹೋದನು.</verse>
				<verse number="13">ಆ ವ್ಯಕ್ತಿ ತನ್ನ ಹತ್ತು ಕೆಲಸಗಾರರನ್ನು ಕರೆದು, ಅವರಿಗೆ ಹತ್ತು ನಾಣ್ಯಗಳನ್ನು ಒಪ್ಪಿಸಿ, ‘ನಾನು ಬರುವವರೆಗೆ ವ್ಯಾಪಾರ ಮಾಡಿಕೊಂಡಿರಿ,’ ಎಂದು ಹೇಳಿದನು.</verse>
				<verse number="14">“ಆದರೆ ಅವನ ನಾಡಿನವರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮ್ಮ ಅರಸನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ಪ್ರತಿನಿಧಿಗಳನ್ನು ಕಳುಹಿಸಿದರು.</verse>
				<verse number="15">“ಆದರೂ ಅವನು ತನ್ನ ರಾಜ್ಯವನ್ನು ಪಡೆದು ಹಿಂದಿರುಗಿದಾಗ, ವ್ಯಾಪಾರದಿಂದ ಇನ್ನೂ ಎಷ್ಟು ಲಾಭಗಳಿಸಿದರೆಂದು ತಿಳಿದುಕೊಳ್ಳುವಂತೆ, ತಾನು ಹಣ ಕೊಟ್ಟ ಆ ಕೆಲಸಗಾರರನ್ನು ತನ್ನ ಬಳಿಗೆ ಕರೆತರಲು ಆಜ್ಞಾಪಿಸಿದನು.</verse>
				<verse number="16">“ಆಗ ಮೊದಲನೆಯವನು ಬಂದು, ‘ಸ್ವಾಮಿ, ನಿಮ್ಮ ಒಂದು ನಾಣ್ಯದಿಂದ ಇನ್ನೂ ಹತ್ತು ನಾಣ್ಯಗಳನ್ನು ಸಂಪಾದಿಸಿದೆ,’ ಎಂದನು.</verse>
				<verse number="17">“ಅದಕ್ಕೆ ಅವನು, ‘ಚೆನ್ನಾಗಿ ಮಾಡಿದಿ, ಒಳ್ಳೆಯ ಸೇವಕನೇ. ನೀನು ಅತ್ಯಂತ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ, ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು,’ ಎಂದನು.</verse>
				<verse number="18">“ಎರಡನೆಯವನು ಬಂದು, ‘ಸ್ವಾಮಿ, ನಿನ್ನ ಒಂದು ನಾಣ್ಯದಿಂದ ಇನ್ನೂ ಐದು ನಾಣ್ಯಗಳನ್ನು ಸಂಪಾದಿಸಿದೆ,’ ಎಂದನು.</verse>
				<verse number="19">“ಅದಕ್ಕೆ ಅವನು, ‘ನೀನು ಐದು ಪಟ್ಟಣಗಳ ಮೇಲೆ ಅಧಿಕಾರಿಯಾಗಿರು,’ ಎಂದು ಅವನಿಗೆ ಹೇಳಿದನು.</verse>
				<verse number="20">“ಆಗ ಮತ್ತೊಬ್ಬನು ಬಂದು, ‘ಸ್ವಾಮಿ, ಇಗೋ, ನಾನು ಕರವಸ್ತ್ರದಲ್ಲಿ ಕಟ್ಟಿಟ್ಟಿದ್ದ ನಿಮ್ಮ ನಾಣ್ಯ ಇದೇ.</verse>
				<verse number="21">ನೀವು ಕಠಿಣ ಮನುಷ್ಯರೆಂದು ನಾನು ನಿಮಗೆ ಭಯಪಟ್ಟೆನು. ನೀನು ಕೂಡಿಡದಿರುವುದನ್ನು ತೆಗೆದುಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆಗಿದ್ದೀ,’ ಎಂದನು.</verse>
				<verse number="22">“ಆಗ ಆ ಯಜಮಾನನು, ‘ಕೆಟ್ಟ ಸೇವಕನೇ! ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿಸುವೆನು. ನಾನು ಕೂಡಿಡದೆ ಇರುವಲ್ಲಿ ತೆಗೆದುಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.</verse>
				<verse number="23">ಹಾಗಿದ್ದರೆ ನನ್ನ ಹಣವನ್ನು ಬಡ್ಡಿ ಅಂಗಡಿಯಲ್ಲಿ ಏಕೆ ಹಾಕಲಿಲ್ಲ, ನಾನು ಹಿಂದಿರುಗಿದಾಗ ಹಣವನ್ನು ಬಡ್ಡಿ ಸಮೇತವಾಗಿ ತೆಗೆದುಕೊಳ್ಳುತ್ತಿದ್ದೆನು,’ ಎಂದು ಹೇಳಿದನು.</verse>
				<verse number="24">“ಯಜಮಾನನು ಹತ್ತಿರ ನಿಂತಿದ್ದವರಿಗೆ, ‘ಇವನಿಂದ ಆ ನಾಣ್ಯವನ್ನು ತೆಗೆದುಕೊಂಡು ಹತ್ತು ನಾಣ್ಯಗಳಿದ್ದವನಿಗೆ ಕೊಡಿರಿ,’ ಎಂದನು.</verse>
				<verse number="25">“ಆಗ ಅವರು, ‘ಸ್ವಾಮಿ, ಅವನಿಗೆ ಈಗಾಗಲೇ ಹತ್ತು ನಾಣ್ಯಗಳಿವೆಯಲ್ಲಾ!’ ಎಂದರು.</verse>
				<verse number="26">“ಆಗ ಯಜಮಾನನು, ‘ಇದ್ದ ಪ್ರತಿಯೊಬ್ಬರಿಗೆ ಕೊಡಲಾಗುವುದು ಮತ್ತು ಇಲ್ಲದವರ ಕಡೆಯಿಂದ ಇದ್ದ ಅಲ್ಪವನ್ನೂ ಕಸಿದುಕೊಳ್ಳಲಾಗುವುದು.</verse>
				<verse number="27">ಆದರೆ ತಮ್ಮ ಮೇಲೆ ನಾನು ಆಳಿಕೆ ಮಾಡುವುದನ್ನು ಇಷ್ಟಪಡದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ,’ ಎಂದನು.”</verse>
				<verse number="28">ಯೇಸು ಹೀಗೆ ಹೇಳಿದ ತರುವಾಯ, ಶಿಷ್ಯರಿಗೆ ಮುಂದಾಗಿ, ಯೆರೂಸಲೇಮಿಗೆ ಹೊರಟರು.</verse>
				<verse number="29">ಇದಾದ ಮೇಲೆ ಅವರು ಓಲಿವ್ ಗುಡ್ಡದ ಕಡೆಗೆ ಇರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ, ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕರೆದು,</verse>
				<verse number="30">“ನಿಮ್ಮ ಎದುರಿಗಿರುವ ಹಳ್ಳಿಗೆ ಹೋಗಿರಿ, ನೀವು ಅದರೊಳಗೆ ಪ್ರವೇಶಿಸುತ್ತಿರುವಾಗ, ಅಲ್ಲಿ ಕಟ್ಟಿರುವ ಮತ್ತು ಯಾರೂ ಅದರ ಮೇಲೆ ಸವಾರಿ ಮಾಡದಿರುವ ಒಂದು ಕತ್ತೆಮರಿಯನ್ನು ಅಲ್ಲಿ ಕಾಣುವಿರಿ. ಅದನ್ನು ಬಿಚ್ಚಿ ಇಲ್ಲಿಗೆ ತೆಗೆದುಕೊಂಡು ಬನ್ನಿರಿ.</verse>
				<verse number="31">ಯಾರಾದರೂ ನಿಮಗೆ, ‘ಏಕೆ ಅದನ್ನು ಬಿಚ್ಚುತ್ತೀರಿ?’ ಎಂದು ಕೇಳಿದರೆ, ನೀವು ಅವರಿಗೆ, ‘ಇದು ಕರ್ತದೇವರಿಗೆ ಬೇಕಾಗಿದೆ,’ ಎಂದು ಹೇಳಿರಿ,” ಎಂದರು.</verse>
				<verse number="32">ಆ ಶಿಷ್ಯರಿಬ್ಬರೂ ತಮ್ಮ ಮಾರ್ಗವಾಗಿ ಹೊರಟುಹೋಗಿ ಯೇಸು ತಮಗೆ ಹೇಳಿದಂತೆಯೇ ಕಂಡರು.</verse>
				<verse number="33">ಅವರು ಆ ಕತ್ತೆಮರಿಯನ್ನು ಬಿಚ್ಚುತ್ತಿರುವಾಗ, ಅದರ ಯಜಮಾನರು ಅವರಿಗೆ, “ನೀವು ಕತ್ತೆಮರಿಯನ್ನು ಯಾಕೆ ಬಿಚ್ಚುತ್ತೀರಿ?” ಎಂದು ಕೇಳಿದ್ದಕ್ಕೆ,</verse>
				<verse number="34">ಅವರು, “ಇದು ಕರ್ತದೇವರಿಗೆ ಬೇಕಾಗಿದೆ,” ಎಂದರು.</verse>
				<verse number="35">ಶಿಷ್ಯರು ಅದನ್ನು ಯೇಸುವಿನ ಬಳಿಗೆ ತಂದು, ತಮ್ಮ ಬಟ್ಟೆಗಳನ್ನು ಕತ್ತೆಮರಿಯ ಮೇಲೆ ಹಾಕಿ, ಅದರ ಮೇಲೆ ಯೇಸುವನ್ನು ಕೂರಿಸಿದರು.</verse>
				<verse number="36">ಯೇಸು ಹೋಗುತ್ತಿರುವಾಗ, ಜನರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.</verse>
				<verse number="37">ಇದಲ್ಲದೆ ಯೇಸು ಓಲಿವ್ ಗುಡ್ಡದಿಂದ ಇಳಿಜಾರನ್ನು ಸಮೀಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ಕಂಡ ಎಲ್ಲ ಮಹತ್ಕಾರ್ಯಗಳಿಗಾಗಿ ಸಂತೋಷಪಡುತ್ತಾ, ಮಹಾ ಸ್ವರದಿಂದ ದೇವರನ್ನು ಹೀಗೆ ಕೊಂಡಾಡಲಾರಂಭಿಸಿದರು:</verse>
				<verse number="38">“ಕರ್ತದೇವರ ಹೆಸರಿನಲ್ಲಿ ಬರುವ ಅರಸನು ಆಶೀರ್ವಾದ ಹೊಂದಲಿ!” “ಪರಲೋಕದಲ್ಲಿ ಸಮಾಧಾನ, ಅತ್ಯುನ್ನತದಲ್ಲಿ ಮಹಿಮೆ!”</verse>
				<verse number="39">ಜನಸಮೂಹದಲ್ಲಿದ್ದ ಕೆಲವು ಫರಿಸಾಯರು ಯೇಸುವಿಗೆ, “ಬೋಧಕರೇ, ನಿಮ್ಮ ಶಿಷ್ಯರನ್ನು ಗದರಿಸಿ!” ಎಂದರು.</verse>
				<verse number="40">ಆಗ ಯೇಸು ಅವರಿಗೆ, “ಇವರು ಸುಮ್ಮನಾದರೆ, ಈ ಕಲ್ಲುಗಳು ಕೂಗುವವು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.</verse>
				<verse number="41">ತರುವಾಯ ಯೇಸು ಯೆರೂಸಲೇಮ ಪಟ್ಟಣವನ್ನೂ ಅದರ ಸ್ಥಿತಿಯನ್ನೂ ಕಂಡು, ಅದರ ಸಲುವಾಗಿ ಅತ್ತು,</verse>
				<verse number="42">“ನೀನು ಇಂದಾದರೂ ನಿನ್ನ ಸಮಾಧಾನದ ವಿಷಯಗಳನ್ನು ಅರಿತುಕೊಂಡಿದ್ದರೆ, ಚೆನ್ನಾಗಿತ್ತು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.</verse>
				<verse number="43">ನಿನ್ನ ಶತ್ರುಗಳು ನಿನ್ನ ಸುತ್ತಲೂ ಅಡ್ಡಗೋಡೆಯನ್ನು ಕಟ್ಟಿ, ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಬಂಧಿಸುವ ದಿನಗಳು ಬರುವವು.</verse>
				<verse number="44">ಇದಲ್ಲದೆ ಅವರು ಗೋಡೆಯೊಳಗಿನ ನಿನ್ನನ್ನೂ ನಿನ್ನ ಮಕ್ಕಳನ್ನೂ ನೆಲಕ್ಕೆ ಬಡಿಯುವರು. ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ ದೇವರು ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲ,” ಎಂದರು.</verse>
				<verse number="45">ಅನಂತರ ಯೇಸು ದೇವಾಲಯದ ಅಂಗಳದೊಳಗೆ ಹೋಗಿ, ಅದರಲ್ಲಿ ವ್ಯಾಪಾರಮಾಡುವವರನ್ನು ಹೊರಗೆ ಹಾಕುವುದಕ್ಕೆ ಪ್ರಾರಂಭಿಸಿ,</verse>
				<verse number="46">ಅವರಿಗೆ, “ ‘ನನ್ನ ಮನೆಯು ಪ್ರಾರ್ಥನೆಯ ಮನೆಯಾಗಿದೆ,’ ಎಂದು ಬರೆದದೆ. ನೀವೋ ಅದನ್ನು, ‘ಕಳ್ಳರ ಗವಿಯನ್ನಾಗಿ’ ಮಾಡಿದ್ದೀರಿ,” ಎಂದರು.</verse>
				<verse number="47">ಯೇಸು ಪ್ರತಿದಿನವೂ ದೇವಾಲಯದಲ್ಲಿ ಬೋಧಿಸುತ್ತಿದ್ದರು. ಆದರೆ ಮುಖ್ಯಯಾಜಕರೂ ನಿಯಮ ಬೋಧಕರೂ ಜನರ ಪ್ರಮುಖರೂ ಯೇಸುವನ್ನು ಕೊಲ್ಲುವುದಕ್ಕೆ ಹವಣಿಸುತ್ತಿದ್ದರು.</verse>
				<verse number="48">ಜನರೆಲ್ಲರೂ ಯೇಸು ಹೇಳುವ ಒಂದೊಂದು ಮಾತಿಗೂ ಬಹಳ ಲಕ್ಷ್ಯಕೊಟ್ಟು ಯೇಸುವಿನ ಉಪದೇಶವನ್ನು ಕೇಳುತ್ತಿದ್ದುದರಿಂದ, ಅವರಿಗೆ ಏನು ಮಾಡಬೇಕೋ ತೋಚಲಿಲ್ಲ.</verse>
			</chapter>
			<chapter number="20">
				<verse number="1">ಆ ದಿವಸಗಳಲ್ಲಿ ಒಂದು ದಿನ ಯೇಸು ದೇವಾಲಯದ ಅಂಗಳದಲ್ಲಿ ಜನರಿಗೆ ಬೋಧಿಸುತ್ತಾ, ಸುವಾರ್ತೆಯನ್ನು ಸಾರುತ್ತಿದ್ದರು. ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೊಂದಿಗೆ ಅವರ ಬಳಿಗೆ ಬಂದು</verse>
				<verse number="2">ಯೇಸುವಿಗೆ, “ನೀವು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತೀರಿ? ನಿಮಗೆ ಈ ಅಧಿಕಾರವನ್ನು ಕೊಟ್ಟವರು ಯಾರು? ನಮಗೆ ಹೇಳಿ,” ಎಂದರು.</verse>
				<verse number="3">ಅದಕ್ಕೆ ಯೇಸು ಅವರಿಗೆ, “ನಾನು ಸಹ ನಿಮ್ಮನ್ನು ಒಂದು ವಿಷಯ ಕೇಳುತ್ತೇನೆ, ನನಗೆ ಉತ್ತರಕೊಡಿರಿ.</verse>
				<verse number="4">ಯೋಹಾನನಿಗೆ ದೀಕ್ಷಾಸ್ನಾನವನ್ನು ಕೊಡುವ ಅಧಿಕಾರ ಪರಲೋಕದಿಂದ ಬಂದದ್ದೋ ಇಲ್ಲವೇ ಮನುಷ್ಯರಿಂದಲೋ?” ಎಂದು ಕೇಳಿದರು.</verse>
				<verse number="5">ಆಗ ಅವರು ತಮ್ಮೊಳಗೆ, “ ‘ಪರಲೋಕದಿಂದ’ ಎಂದು ನಾವು ಹೇಳಿದರೆ ಆತನು, ‘ನೀವು ಏಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವರು.</verse>
				<verse number="6">‘ಮನುಷ್ಯರಿಂದ ಬಂತು,’ ಎಂದು ನಾವು ಹೇಳಿದರೆ, ಜನರೆಲ್ಲಾ ನಮಗೆ ಕಲ್ಲೆಸೆಯುವರು. ಏಕೆಂದರೆ ಯೋಹಾನನು ಒಬ್ಬ ಪ್ರವಾದಿಯೆಂದು ಅವರು ಒಪ್ಪಿದ್ದಾರೆ,” ಎಂದು ಆಲೋಚಿಸಿ,</verse>
				<verse number="7">“ಅದು ಎಲ್ಲಿಂದಲೋ ನಮಗೆ ಗೊತ್ತಿಲ್ಲ,” ಎಂದು ಉತ್ತರಕೊಟ್ಟರು.</verse>
				<verse number="8">ಆಗ ಯೇಸು ಅವರಿಗೆ, “ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.</verse>
				<verse number="9">ಬಳಿಕ ಯೇಸು ಜನರಿಗೆ ಈ ಸಾಮ್ಯವನ್ನು ಹೇಳಿದರು: “ಒಬ್ಬನು ದ್ರಾಕ್ಷಿಯ ತೋಟವನ್ನು ನೆಟ್ಟು, ಅದನ್ನು ರೈತರಿಗೆ ಗೇಣಿಗೆ ಕೊಟ್ಟು, ದೀರ್ಘಕಾಲ ದೂರದೇಶಕ್ಕೆ ಪ್ರವಾಸಹೋದನು.</verse>
				<verse number="10">ಫಲದ ಕಾಲ ಬಂದಾಗ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷಿತೋಟದ ಫಲವನ್ನು ಕೊಡುವಂತೆ ತನ್ನ ಸೇವಕನನ್ನು ಅವರ ಬಳಿಗೆ ಕಳುಹಿಸಿದನು. ಆದರೆ ಆ ಗೇಣಿಗೆದಾರರು ಅವನನ್ನು ಹೊಡೆದು, ಬರಿಗೈಯಲ್ಲಿ ಕಳುಹಿಸಿಬಿಟ್ಟರು.</verse>
				<verse number="11">ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಕಳುಹಿಸಿದನು. ಅವರು ಎರಡನೆಯವನನ್ನೂ ಸಹ ಹೊಡೆದು, ಅವಮಾನಪಡಿಸಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.</verse>
				<verse number="12">ಆ ಯಜಮಾನನು ಮೂರನೆಯವನನ್ನು ಕಳುಹಿಸಿದನು. ಆಗ ಅವರು ಅವನನ್ನೂ ಗಾಯಪಡಿಸಿ ಹೊರಗೆ ಹಾಕಿದರು.</verse>
				<verse number="13">“ಆಗ ದ್ರಾಕ್ಷಿಯ ತೋಟದ ಯಜಮಾನನು, ‘ನಾನೇನು ಮಾಡಲಿ? ನಾನು ನನ್ನ ಪ್ರಿಯ ಮಗನನ್ನೇ ಕಳುಹಿಸುವೆನು, ಬಹುಶಃ ಅವರು ಅವನಿಗಾದರೂ ಮರ್ಯಾದೆಕೊಟ್ಟಾರು,’ ಎಂದುಕೊಂಡನು.</verse>
				<verse number="14">“ಆದರೆ ಗೇಣಿಗೆದಾರರು ಅವನನ್ನು ಕಂಡಾಗ ತಮ್ಮತಮ್ಮೊಳಗೆ, ‘ಇವನೇ ಬಾಧ್ಯಸ್ಥನು. ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಮಾಡಿಕೊಂಡರು.</verse>
				<verse number="15">ಹಾಗೆಯೇ, ಅವರು ಅವನನ್ನು ದ್ರಾಕ್ಷಿತೋಟದ ಹೊರಗೆ ಹಾಕಿ ಕೊಂದರು. “ಹೀಗಿರಲಾಗಿ ದ್ರಾಕ್ಷಿತೋಟದ ಯಜಮಾನನು ಅವರಿಗೆ ಏನು ಮಾಡುವನು?</verse>
				<verse number="16">ಅವನು ಬಂದು ಆ ಗೇಣಿಗೆದಾರರನ್ನು ಸಂಹರಿಸಿ ದ್ರಾಕ್ಷಿಯ ತೋಟವನ್ನು ಬೇರೆಯವರಿಗೆ ಒಪ್ಪಿಸುವನು,” ಎಂದರು. ಜನರು ಇದನ್ನು ಕೇಳಿದಾಗ, “ಹಾಗೆ ಎಂದಿಗೂ ಆಗಬಾರದು!” ಎಂದರು.</verse>
				<verse number="17">ಆಗ ಯೇಸು ಅವರನ್ನು ದಿಟ್ಟಿಸಿ ನೋಡಿ, “ಹಾಗಾದರೆ, “ ‘ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು,’ ಎಂದು ಪವಿತ್ರ ವೇದದಲ್ಲಿ ಬರೆದಿರುವುದರ ಅರ್ಥ ಏನು?</verse>
				<verse number="18">ಆ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದೇ ಕಲ್ಲು ಯಾವನ ಮೇಲೆ ಬೀಳುವುದೋ ಅವನನ್ನು ಅದು ಜಜ್ಜಿ ಹೋಗುವಂತೆ ಮಾಡುವುದು,” ಎಂದರು.</verse>
				<verse number="19">ಅದೇ ಗಳಿಗೆಯಲ್ಲಿ ನಿಯಮ ಬೋಧಕರೂ ಮುಖ್ಯಯಾಜಕರೂ ಯೇಸುವನ್ನು ಬಂಧಿಸುವುದಕ್ಕೆ ಹವಣಿಸಿದರು. ಏಕೆಂದರೆ ಯೇಸು ತಮಗೆ ವಿರೋಧವಾಗಿಯೇ ಈ ಸಾಮ್ಯವನ್ನು ಹೇಳಿದ್ದಾರೆಂದು ಅವರು ತಿಳಿದುಕೊಂಡರು. ಆದರೂ ಅವರು ಜನರಿಗೆ ಭಯಪಟ್ಟರು.</verse>
				<verse number="20">ಅವರು ಯೇಸುವನ್ನು ಹೊಂಚಿ ನೋಡುತ್ತಾ, ಮಾತಿನಲ್ಲಿ ಅವರನ್ನು ಸಿಕ್ಕಿಸುವಂತೆ ಅಧಿಪತಿಗೂ ಅಧಿಕಾರಕ್ಕೂ ಒಪ್ಪಿಸಿಕೊಡಲು, ನೀತಿವಂತರೆಂದು ನಟಿಸುವ ಗೂಢಚಾರರನ್ನು ಕಳುಹಿಸಿದರು.</verse>
				<verse number="21">ಅವರು ಯೇಸುವಿಗೆ, “ಗುರುವೇ, ನೀವು ಮುಖ ದಾಕ್ಷಿಣ್ಯವಿಲ್ಲದೆ ಸರಿಯಾಗಿ ಬೋಧಿಸುತ್ತೀರಿ ಮತ್ತು ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವರಾಗಿದ್ದೀರೆಂದು ನಾವು ಬಲ್ಲೆವು.</verse>
				<verse number="22">ಆದ್ದರಿಂದ ಕೈಸರನಿಗೆ ತೆರಿಗೆ ಕೊಡುವುದು ನಮಗೆ ಮೋಶೆಯ ನಿಯಮಕ್ಕೆ ಅನುಸಾರವಾದದ್ದೋ?” ಎಂದು ಕೇಳಿದರು.</verse>
				<verse number="23">ಆದರೆ ಯೇಸು ಅವರ ಕುಯುಕ್ತಿಯನ್ನು ತಿಳಿದು ಅವರಿಗೆ,</verse>
				<verse number="24">“ಒಂದು ಬೆಳ್ಳಿ ನಾಣ್ಯವನ್ನು ತೋರಿಸಿರಿ. ಇದರಲ್ಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಅವರನ್ನು ಕೇಳಲು ಅವರು, “ಕೈಸರನದು,” ಎಂದರು.</verse>
				<verse number="25">ಆಗ ಯೇಸು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೂ ದೇವರದ್ದನ್ನು ದೇವರಿಗೂ ಕೊಡಿರಿ,” ಎಂದರು.</verse>
				<verse number="26">ಯೇಸು ಜನರ ಮುಂದೆ ಬಹಿರಂಗವಾಗಿ ಹೇಳಿದ ಮಾತಿನಲ್ಲಿ ಅವರು ತಪ್ಪು ಕಂಡುಹಿಡಿಯಲಾರದೆ ಹೋದರು. ಯೇಸುವಿನ ಉತ್ತರಗಳಿಗಾಗಿ ಆಶ್ಚರ್ಯಪಟ್ಟು ಸುಮ್ಮನಾದರು.</verse>
				<verse number="27">ಪುನರುತ್ಥಾನವನ್ನು ಅಲ್ಲಗಳೆಯುವ ಸದ್ದುಕಾಯರಲ್ಲಿ ಕೆಲವರು, ಯೇಸುವಿನ ಬಳಿಗೆ ಬಂದು ಅವರಿಗೆ,</verse>
				<verse number="28">“ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಸಹೋದರನು ಅವನ ಪತ್ನಿಯನ್ನು ಮದುವೆಯಾಗಿ ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕೆಂದು ಮೋಶೆ ನಮಗೆ ಬರೆದಿಟ್ಟಿದ್ದಾನೆ.</verse>
				<verse number="29">ಹೀಗೆ ಏಳುಮಂದಿ ಸಹೋದರರಿದ್ದರು. ಮೊದಲನೆಯವನು ಆ ಸ್ತ್ರೀಯನ್ನು ಮದುವೆಯಾಗಿ ಸಂತಾನವಿಲ್ಲದೆ ಮೃತಪಟ್ಟನು.</verse>
				<verse number="30">ಎರಡನೆಯವನೂ ಆಕೆಯನ್ನು ಮದುವೆಯಾಗಿ ಸಂತಾನವಿಲ್ಲದೆ ಮೃತನಾದನು.</verse>
				<verse number="31">ಮೂರನೆಯವನು ಆಕೆಯನ್ನು ಮದುವೆಯಾದನು, ಅದೇ ರೀತಿಯಲ್ಲಿ ಏಳು ಜನರು ಸಹ ಮದುವೆಯಾಗಿ ಮಕ್ಕಳಿಲ್ಲದೆ ನಿಧನರಾದರು.</verse>
				<verse number="32">ಕೊನೆಗೆ, ಆ ಸ್ತ್ರೀಯು ಸಹ ಮರಣಹೊಂದಿದಳು.</verse>
				<verse number="33">ಹಾಗಾದರೆ, ಪುನರುತ್ಥಾನದಲ್ಲಿ ಅವರು ಜೀವಂತವಾಗಿ ಎದ್ದಾಗ ಅವರಲ್ಲಿ ಆಕೆಯು ಯಾರ ಪತ್ನಿಯಾಗಿರುವಳು? ಏಕೆಂದರೆ ಏಳುಮಂದಿಯೂ ಅವಳನ್ನು ಮದುವೆ ಮಾಡಿಕೊಂಡಿದ್ದರಲ್ಲಾ?” ಎಂದರು.</verse>
				<verse number="34">ಅದಕ್ಕೆ ಯೇಸು ಉತ್ತರವಾಗಿ, “ಈ ಲೋಕದ ಜನರು ಮದುವೆ ಮಾಡಿಕೊಳ್ಳುತ್ತಾರೆ. ಮದುವೆ ಮಾಡಿಕೊಡುತ್ತಾರೆ.</verse>
				<verse number="35">ಆದರೆ ಮುಂಬರುವ ಲೋಕದಲ್ಲಿ ಸತ್ತವರು ಪುನರುತ್ಥಾನವನ್ನು ಹೊಂದಿ, ಯೋಗ್ಯರೆಂದು ಮದುವೆಮಾಡಿಕೊಳ್ಳುವುದೂ ಇಲ್ಲ, ಮದುವೆಮಾಡಿಕೊಡುವುದೂ ಇಲ್ಲ.</verse>
				<verse number="36">ಅವರು ಇನ್ನೆಂದಿಗೂ ಸಾಯುವುದಿಲ್ಲ. ಏಕೆಂದರೆ ಅವರು ಪುನರುತ್ಥಾನದ ಮಕ್ಕಳೂ ದೇವದೂತರಿಗೆ ಸರಿಸಮಾನರೂ ಆಗಿರುವುದರಿಂದ, ಅವರು ದೇವರ ಮಕ್ಕಳಾಗಿದ್ದಾರೆ.</verse>
				<verse number="37">ಆದರೆ ಉರಿಯುವ ಪೊದೆಯ ಬಳಿ ಕರ್ತದೇವರು, ‘ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು,’ ಎಂದು ತಿಳಿಸಿ ಸತ್ತವರು ಏಳುತ್ತಾರೆಂಬದನ್ನು ಮೋಶೆಗೆ ವ್ಯಕ್ತಪಡಿಸಿದ್ದಾರೆ.</verse>
				<verse number="38">ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ. ಏಕೆಂದರೆ ಎಲ್ಲರೂ ಅವರಿಗಾಗಿ ಜೀವಿಸುತ್ತಾರೆ,” ಎಂದರು.</verse>
				<verse number="39">ಆಗ ನಿಯಮ ಬೋಧಕರಲ್ಲಿ ಕೆಲವರು ಪ್ರತ್ಯುತ್ತರವಾಗಿ, “ಬೋಧಕರೇ, ನೀವು ಸರಿಯಾಗಿ ಹೇಳಿದಿರಿ,” ಎಂದರು.</verse>
				<verse number="40">ಯಾರೂ ಯೇಸುವಿಗೆ ಯಾವ ಪ್ರಶ್ನೆಯನ್ನು ಕೇಳುವುದಕ್ಕೂ ಧೈರ್ಯಗೊಳ್ಳಲಿಲ್ಲ.</verse>
				<verse number="41">ಯೇಸು ಅವರಿಗೆ, “ಕ್ರಿಸ್ತನು ದಾವೀದನ ಪುತ್ರನೆಂದು ಜನರು ಹೇಳುವುದು ಹೇಗೆ?</verse>
				<verse number="42">ದಾವೀದನು ತಾನೇ ಕೀರ್ತನೆಗಳ ಗ್ರಂಥದಲ್ಲಿ ಹೀಗೆ ಹೇಳಿದ್ದಾನೆ: “ ‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು</verse>
				<verse number="43">ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕುಳಿತುಕೊಂಡಿರು.” ’</verse>
				<verse number="44">ಆದಕಾರಣ ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರು,’ ಎಂದು ಕರೆಯುವಾಗ, ಅವರು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದರು.</verse>
				<verse number="45">ಜನರೆಲ್ಲರೂ ಕೇಳುತ್ತಿದ್ದಾಗ ಯೇಸು ತಮ್ಮ ಶಿಷ್ಯರಿಗೆ,</verse>
				<verse number="46">“ನಿಯಮ ಬೋಧಕರ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಯನ್ನು ತೊಟ್ಟುಕೊಂಡು ತಿರುಗಾಡುವುದಕ್ಕೆ ಬಯಸುವವರೂ ಮಾರುಕಟ್ಟೆ ಬೀದಿಗಳಲ್ಲಿ ವಂದನೆಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಬಯಸುವವರಾಗಿದ್ದಾರೆ;</verse>
				<verse number="47">ಇವರು ವಿಧವೆಯರ ಮನೆಗಳನ್ನು ದೋಚಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು,” ಎಂದರು.</verse>
			</chapter>
			<chapter number="21">
				<verse number="1">ಯೇಸು ಗಮನಿಸುತ್ತಿರುವಾಗ, ಐಶ್ವರ್ಯವಂತರು ತಮ್ಮ ಕಾಣಿಕೆಗಳನ್ನು ದೇವಾಲಯದ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕುವುದನ್ನು ಕಂಡರು.</verse>
				<verse number="2">ಒಬ್ಬ ಬಡ ವಿಧವೆಯು ಸಹ ಎರಡು ಕಾಸುಗಳನ್ನು ಪೆಟ್ಟಿಗೆಯಲ್ಲಿ ಹಾಕುವುದನ್ನು ಯೇಸು ಕಂಡರು.</verse>
				<verse number="3">ಆಗ ಯೇಸು, “ನಾನು ನಿಮಗೆ ನಿಜವಾಗಿ ಹೇಳುತ್ತೇನೆ: ಈ ಬಡ ವಿಧವೆಯು ಅವರೆಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ.</verse>
				<verse number="4">ಏಕೆಂದರೆ ಇವರೆಲ್ಲರೂ ತಮಗಿರುವ ಸಮೃದ್ಧಿಯಲ್ಲಿ, ದೇವರಿಗೆ ಕಾಣಿಕೆಗಳನ್ನು ಹಾಕಿದ್ದಾರೆ. ಆದರೆ ಈಕೆಯು ತನ್ನ ಬಡತನದಲ್ಲಿಯೂ ತನ್ನ ಜೀವನಕ್ಕೆ ಇದ್ದದ್ದನ್ನೆಲ್ಲಾ ಹಾಕಿದ್ದಾಳೆ,” ಎಂದರು.</verse>
				<verse number="5">ತರುವಾಯ ಶಿಷ್ಯರಲ್ಲಿ ಕೆಲವರು ದೇವಾಲಯದ ಕುರಿತು ಅದು ಸುಂದರವಾದ ಕಲ್ಲುಗಳಿಂದಲೂ ದೇವರಿಗೆ ಪ್ರತಿಷ್ಠೆಯ ಕೊಡುಗೆಗಳಿಂದಲೂ ಅಲಂಕೃತವಾಗಿದೆ ಎಂದು ಮಾತನಾಡುತ್ತಿದ್ದರು.</verse>
				<verse number="6">ಆದರೆ ಯೇಸು, “ನೀವು ಕಾಣುತ್ತಿರುವ ಇವೆಲ್ಲವೂ ಕೆಡವಿಹಾಕಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಉಳಿಯದ ಕಾಲ ಬರುವುದು,” ಎಂದರು.</verse>
				<verse number="7">ಆಗ ಅವರು ಯೇಸುವಿಗೆ, “ಬೋಧಕರೇ, ಇವುಗಳು ಯಾವಾಗ ಆಗುವುವು? ಇವುಗಳು ಸಂಭವಿಸುವುದಕ್ಕಿರುವಾಗ ಯಾವ ಸೂಚನೆ ಇರುವುದು?” ಎಂದು ಕೇಳಿದರು.</verse>
				<verse number="8">ಅದಕ್ಕೆ ಯೇಸು, “ನೀವು ಮೋಸಹೋಗದಂತೆ ಎಚ್ಚರಿಕೆಯಾಗಿರಿ. ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಅವರು,’ ಎಂದೂ ‘ಸಮಯ ಸಮೀಪಿಸಿದೆ,’ ಎಂದೂ ಹಕ್ಕು ಸಾಧಿಸುವರು. ನೀವು ಅವರನ್ನು ಹಿಂಬಾಲಿಸಬೇಡಿರಿ.</verse>
				<verse number="9">ನೀವು ಯುದ್ಧಗಳ ಮತ್ತು ಕಲಹಗಳ ವಿಷಯವಾಗಿ ಕೇಳುವಾಗ ದಿಗಿಲುಪಡಬೇಡಿರಿ. ಇವುಗಳೆಲ್ಲಾ ಮೊದಲು ಸಂಭವಿಸಬೇಕು. ಆದರೂ ಕೂಡಲೇ ಅಂತ್ಯ ಬರುವುದಿಲ್ಲ,” ಎಂದರು.</verse>
				<verse number="10">ಯೇಸು ಅವರಿಗೆ, “ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು.</verse>
				<verse number="11">ವಿವಿಧ ಕಡೆಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವುವು. ಭಯ ಹುಟ್ಟಿಸುವ ಘಟನೆಗಳೂ ಆಕಾಶದಿಂದ ಮಹಾಸೂಚನೆಗಳೂ ಆಗುವುವು.</verse>
				<verse number="12">“ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು, ಹಿಂಸಿಸಿ ಸಭಾಮಂದಿರಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ, ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.</verse>
				<verse number="13">ಇದು ಸಾಕ್ಷಿ ನೀಡಲು ನಿಮಗೆ ಸದಾವಕಾಶವಾಗಿರುತ್ತದೆ.</verse>
				<verse number="14">ಆಗ ನೀವು ಏನು ಉತ್ತರಕೊಡಬೇಕೆಂದು ಮುಂದಾಗಿ ಚಿಂತಿಸಬೇಕಾಗಿಲ್ಲವೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ.</verse>
				<verse number="15">ಏಕೆಂದರೆ ನಿಮ್ಮ ವಿರೋಧಿಗಳು ಸಹ ಪ್ರತಿವಾದಿಸಲಾಗದ ಇಲ್ಲವೆ ವಿರೋಧಿಸಲಾಗದ ಮಾತನ್ನೂ ಜ್ಞಾನವನ್ನೂ ನಾನು ನಿಮಗೆ ಕೊಡುವೆನು.</verse>
				<verse number="16">ತಂದೆತಾಯಿಗಳೂ ಸಹೋದರರೂ ಬಂಧುಗಳೂ ಸ್ನೇಹಿತರೂ ನಿಮ್ಮನ್ನು ಹಿಡಿದುಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು.</verse>
				<verse number="17">ಇದಲ್ಲದೆ ನನ್ನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು.</verse>
				<verse number="18">ಆದರೆ ನಿಮ್ಮ ತಲೆ ಕೂದಲೊಂದಾದರೂ ನಾಶವಾಗುವುದಿಲ್ಲ.</verse>
				<verse number="19">ನೀವು ನಿಮ್ಮ ಸಹನೆಯಿಂದ, ನಿಮ್ಮ ಪ್ರಾಣಗಳನ್ನು ಕಾಪಾಡಿಕೊಳ್ಳುವಿರಿ.</verse>
				<verse number="20">“ಸೈನ್ಯಗಳು ಯೆರೂಸಲೇಮಿಗೆ ಮುತ್ತಿಗೆ ಹಾಕುವುದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲವು ಸಮೀಪಿಸಿದೆ ಎಂದು ತಿಳಿದುಕೊಳ್ಳಿರಿ.</verse>
				<verse number="21">ಆಗ ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ; ಪಟ್ಟಣದ ಮಧ್ಯದಲ್ಲಿರುವವರು ಹೊರಟು ಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಪಟ್ಟಣಕ್ಕೆ ಪ್ರವೇಶಿಸದೆ ಇರಲಿ.</verse>
				<verse number="22">ಏಕೆಂದರೆ ಪವಿತ್ರ ವೇದದಲ್ಲಿ ಬರೆದಿರುವವುಗಳೆಲ್ಲವೂ ನೆರವೇರಲು, ಇವು ದಂಡನೆಯ ದಿವಸಗಳಾಗಿವೆ.</verse>
				<verse number="23">ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ! ದೇಶದಲ್ಲಿ ಈ ಜನರು ಮಹಾ ವಿಪತ್ತಿಗೂ ಕೋಪಕ್ಕೂ ಗುರಿಯಾಗುವರು.</verse>
				<verse number="24">ಇದಲ್ಲದೆ ಅವರು ಖಡ್ಗಕ್ಕೆ ತುತ್ತಾಗಿ ಬೀಳುವರು ಮತ್ತು ಸೆರೆಯಾಗಿ ಎಲ್ಲಾ ರಾಷ್ಟ್ರಗಳಲ್ಲಿ ಒಯ್ಯುವರು. ಯೆಹೂದ್ಯರಲ್ಲದವರ ಕಾಲ ಪರಿಪೂರ್ಣವಾಗುವವರೆಗೆ ಅವರು ಯೆರೂಸಲೇಮನ್ನು ತುಳಿದುಹಾಕುವರು.</verse>
				<verse number="25">“ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ಸೂಚನೆಗಳು ಕಾಣಿಸಿಕೊಳ್ಳುವುವು. ಭೂಮಿಯಲ್ಲಾದರೋ, ಮೊರೆಯುವ ತೆರೆಗಳ ಮತ್ತು ಭೋರ್ಗರೆಯುವ ಸಮುದ್ರದ ನಿಮಿತ್ತ ಜನಾಂಗಗಳು ದಿಕ್ಕುತೋಚದೆ ಸಂಕಟಕ್ಕೆ ಒಳಗಾಗುವರು.</verse>
				<verse number="26">ಆಕಾಶದ ಶಕ್ತಿಗಳು ಕದಲುವುದರಿಂದ ಲೋಕಕ್ಕೆ ಏನು ಸಂಭವಿಸುವುದೋ ಎಂಬ ಭಯಭೀತಿಯಿಂದ, ಮಾನವರು ಮನಗುಂದಿಹೋಗುವರು.</verse>
				<verse number="27">ಆಗ ಮನುಷ್ಯಪುತ್ರನಾದ ನಾನು ಶಕ್ತಿಯಿಂದಲೂ ಮಹಾ ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಜನರು ಕಾಣುವರು.</verse>
				<verse number="28">ಈ ಸಂಗತಿಗಳು ಸಂಭವಿಸಲು ತೊಡಗುವಾಗ, ತಲೆಯೆತ್ತಿ ನಿಲ್ಲಿರಿ. ಏಕೆಂದರೆ ನಿಮ್ಮ ವಿಮೋಚನೆಯು ಸಮೀಪಿಸಿತು,” ಎಂದರು.</verse>
				<verse number="29">ಯೇಸು ಶಿಷ್ಯರಿಗೆ ಈ ಸಾಮ್ಯವನ್ನು ಹೇಳಿದರು: “ಅಂಜೂರದ ಮರವನ್ನು ಮತ್ತು ಇತರ ಮರಗಳನ್ನು ಗಮನಿಸಿರಿ.</verse>
				<verse number="30">ಅವುಗಳ ಎಲೆಗಳು ಚಿಗುರುವುದನ್ನು ಕಾಣುವಾಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿಯೇ ತಿಳಿದುಕೊಳ್ಳುತ್ತೀರಿ.</verse>
				<verse number="31">ಅದೇ ಪ್ರಕಾರ, ಇವೆಲ್ಲ ಸಂಭವಿಸುವುದನ್ನು ನೀವು ಕಾಣುವಾಗ, ದೇವರ ರಾಜ್ಯ ಸಮೀಪಿಸಿತೆಂದು ತಿಳಿದುಕೊಳ್ಳಿರಿ.</verse>
				<verse number="32">“ಇವೆಲ್ಲವೂ ನೆರವೇರುವವರೆಗೆ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.</verse>
				<verse number="33">ಭೂಮ್ಯಾಕಾಶಗಳು ಅಳಿದುಹೋಗುವುವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.</verse>
				<verse number="34">“ನಿಮ್ಮ ಮೇಲೆ ಆ ದಿನವು ಉರುಲಿನಂತೆ ಫಕ್ಕನೆ ಬಾರದಂತೆ ನೀವು ಅತಿಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ, ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ.</verse>
				<verse number="35">ಅದು ಭೂಮಿಯ ಮೇಲೆ ವಾಸವಾಗಿರುವವರೆಲ್ಲರ ಮೇಲೆ ಬರುವುದು.</verse>
				<verse number="36">ಆದಕಾರಣ ಸಂಭವಿಸುವುದಕ್ಕಿರುವ ಇವೆಲ್ಲವುಗಳಿಂದ, ನೀವು ತಪ್ಪಿಸಿಕೊಳ್ಳುವುದಕ್ಕೆ ಯೋಗ್ಯರೆಂದು ಎಣಿಸಿಕೊಳ್ಳುವಂತೆಯೂ ಮನುಷ್ಯಪುತ್ರನಾದ ನನ್ನ ಮುಂದೆ ನಿಂತುಕೊಳ್ಳುವಂತೆಯೂ ಯಾವಾಗಲೂ ಎಚ್ಚರವಾಗಿದ್ದು ಪ್ರಾರ್ಥಿಸುತ್ತಾ ಇರಿ,” ಎಂದರು.</verse>
				<verse number="37">ಯೇಸು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು, ರಾತ್ರಿಯಲ್ಲಿ ಹೊರಟುಹೋಗಿ ಓಲಿವ್ ಗುಡ್ಡದಲ್ಲಿ ವಾಸಿಸುತ್ತಿದ್ದರು.</verse>
				<verse number="38">ಜನರೆಲ್ಲರೂ ಬೆಳಗಿನ ಜಾವದಲ್ಲಿ ಎದ್ದು ಯೇಸುವಿನ ಉಪದೇಶವನ್ನು ಕೇಳುವುದಕ್ಕಾಗಿ ದೇವಾಲಯಕ್ಕೆ ಬರುತ್ತಿದ್ದರು.</verse>
			</chapter>
			<chapter number="22">
				<verse number="1">ಪಸ್ಕವೆಂಬ, ಹುಳಿಯಿಲ್ಲದ ರೊಟ್ಟಿಯ ಹಬ್ಬವು ಸಮೀಪವಾಗಿತ್ತು.</verse>
				<verse number="2">ಮುಖ್ಯಯಾಜಕರೂ ನಿಯಮ ಬೋಧಕರೂ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.</verse>
				<verse number="3">ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಎಂದು ಕರೆಯಲಾಗುವ ಯೂದನಲ್ಲಿ, ಸೈತಾನನು ಪ್ರವೇಶಿಸಿದನು.</verse>
				<verse number="4">ಅವನು ಮುಖ್ಯಯಾಜಕರ ಬಳಿಗೂ ದೇವಾಲಯದ ಕಾವಲಧಿಕಾರಿಗಳ ಬಳಿಗೂ ಹೋಗಿ ಯೇಸುವನ್ನು ಅವರಿಗೆ ಹಿಡಿದುಕೊಡುವ ವಿಧಾನವನ್ನು ಕುರಿತು ಅವರ ಕೂಡ ಚರ್ಚಿಸಿದನು.</verse>
				<verse number="5">ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವುದಕ್ಕೆ ವಾಗ್ದಾನ ಮಾಡಿದರು.</verse>
				<verse number="6">ಅವನೂ ಸಮ್ಮತಿಸಿ, ಜನಸಮೂಹವು ಇಲ್ಲದಿರುವಾಗ ಯೇಸುವನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಕಾಯುತ್ತಿದ್ದನು.</verse>
				<verse number="7">ಆಗ ಪಸ್ಕದ ಕುರಿಯು ಬಲಿಕೊಡಬೇಕಾಗಿದ್ದ ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿನ ಬಂದಿತು.</verse>
				<verse number="8">ಯೇಸು ಪೇತ್ರ ಯೋಹಾನರನ್ನು ಕರೆದು, “ನೀವು ಹೋಗಿ ನಮಗೋಸ್ಕರ ಪಸ್ಕಭೋಜನವನ್ನು ಸಿದ್ಧಮಾಡಿರಿ,” ಎಂದರು.</verse>
				<verse number="9">ಅವರು ಯೇಸುವಿಗೆ, “ನಾವು ಎಲ್ಲಿ ಸಿದ್ಧಮಾಡಬೇಕು?” ಎಂದರು.</verse>
				<verse number="10">ಆಗ ಯೇಸು ಅವರಿಗೆ, “ನೀವು ಪಟ್ಟಣವನ್ನು ಪ್ರವೇಶಿಸಿದಾಗ, ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡಿರುವ ಒಬ್ಬನು ನಿಮ್ಮನ್ನು ಸಂಧಿಸುವನು. ಅವನು ಪ್ರವೇಶಿಸುವ ಮನೆಯೊಳಗೆ ನೀವು ಅವನ ಹಿಂದೆ ಹೋಗಿರಿ.</verse>
				<verse number="11">ನೀವು ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರೊಂದಿಗೆ ಪಸ್ಕಭೋಜನ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ? ಎಂದು ಬೋಧಕರು ನಿನ್ನನ್ನು ಕೇಳುತ್ತಾರೆ’ ಎಂದು ಹೇಳಿರಿ.</verse>
				<verse number="12">ಅವನು ಕ್ರಮಪಡಿಸಿದ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು, ಅಲ್ಲಿಯೇ ಪಸ್ಕಭೋಜನ ಸಿದ್ಧಪಡಿಸಿರಿ,” ಎಂದರು.</verse>
				<verse number="13">ಅವರು ಹೊರಟುಹೋಗಿ ಯೇಸು ತಮಗೆ ಹೇಳಿದಂತೆಯೇ ಕಂಡು, ಪಸ್ಕವನ್ನು ಸಿದ್ಧಮಾಡಿದರು.</verse>
				<verse number="14">ನಿಶ್ಚಿತ ಸಮಯ ಬಂದಾಗ ಯೇಸು ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಕುಳಿತುಕೊಂಡರು.</verse>
				<verse number="15">ಆಗ ಯೇಸು ಅವರಿಗೆ, “ನಾನು ಬಾಧೆಯನ್ನು ಅನುಭವಿಸುವುದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕಭೋಜನ ಮಾಡುವುದಕ್ಕೆ ಕುತೂಹಲದಿಂದ ಅಪೇಕ್ಷಿಸಿದ್ದೇನೆ.</verse>
				<verse number="16">ದೇವರ ರಾಜ್ಯದಲ್ಲಿ ಇದು ನೆರವೇರುವ ತನಕ ನಾನು ಇನ್ನು ಮೇಲೆ ಪಸ್ಕಭೋಜನ ಮಾಡುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.</verse>
				<verse number="17">ಅನಂತರ ಯೇಸು ಪಾನಪಾತ್ರೆಯನ್ನು ತೆಗೆದುಕೊಂಡು, ಸ್ತೋತ್ರಮಾಡಿ, “ಇದನ್ನು ತೆಗೆದುಕೊಳ್ಳಿರಿ ಮತ್ತು ನಿಮ್ಮೊಳಗೆ ಹಂಚಿಕೊಳ್ಳಿರಿ.</verse>
				<verse number="18">ದೇವರ ರಾಜ್ಯವು ಬರುವ ತನಕ ಇನ್ನು ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ,” ಎಂದರು.</verse>
				<verse number="19">ಆಮೇಲೆ ಯೇಸು ರೊಟ್ಟಿಯನ್ನು ತೆಗೆದುಕೊಂಡು, ಸ್ತೋತ್ರಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ,” ಎಂದರು.</verse>
				<verse number="20">ಅದೇ ಪ್ರಕಾರ, ಭೋಜನವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲಾಗುವ, ನನ್ನ ರಕ್ತದಿಂದಾದ ಹೊಸ ಒಡಂಬಡಿಕೆಯಾಗಿದೆ.</verse>
				<verse number="21">ಆದರೂ ಇಗೋ, ನನಗೆ ದ್ರೋಹಬಗೆಯುವವನ ಕೈ ನನ್ನ ಕೈಯೊಂದಿಗೆ ಮೇಜಿನ ಮೇಲೆ ಇದೆ.</verse>
				<verse number="22">ನೇಮಕವಾದ ಪ್ರಕಾರ ಮನುಷ್ಯಪುತ್ರನಾದ ನಾನು ಹೊರಟುಹೋಗುತ್ತೇನೆ; ಆದರೆ ನನಗೆ ದ್ರೋಹಬಗೆಯುವವನಿಗೋ ಎಷ್ಟೋ ಕಷ್ಟ!” ಎಂದು ಹೇಳಿದರು.</verse>
				<verse number="23">ಆಗ ಇದನ್ನು ದ್ರೋಹಬಗೆಯುವವನು ಯಾವನು ಎಂದು ಶಿಷ್ಯರು ತಮ್ಮೊಳಗೆ ಪ್ರಶ್ನೆ ಮಾಡಲಾರಂಭಿಸಿದರು.</verse>
				<verse number="24">ಇದಲ್ಲದೆ ತಮ್ಮೊಳಗೆ ಯಾರು ಅತಿ ದೊಡ್ಡವನೆಂಬುದಾಗಿ ಶಿಷ್ಯರಲ್ಲಿ ವಿವಾದವು ಪ್ರಾರಂಭವಾಯಿತು.</verse>
				<verse number="25">ಆಗ ಯೇಸು ಅವರಿಗೆ, “ಯೆಹೂದ್ಯರಲ್ಲದವರ ಅರಸರು ತಮ್ಮ ಜನರ ಮೇಲೆ ದೊರೆತನ ಮಾಡುತ್ತಾರೆ; ಅವರ ಮೇಲೆ ಅಧಿಕಾರವನ್ನು ನಡೆಸುವವರು ಉಪಕಾರಿಗಳು ಎಂದು ಎಣಿಸಿಕೊಳ್ಳುತ್ತಾರೆ.</verse>
				<verse number="26">ಆದರೆ ನೀವು ಹಾಗಿರಬಾರದು. ನಿಮ್ಮೊಳಗೆ ಅತಿ ದೊಡ್ಡವನಾಗಿರುವವನು ಅತಿ ಚಿಕ್ಕವನಂತೆ ಇರಲಿ ಮತ್ತು ಆಳ್ವಿಕೆ ಮಾಡುವವನು ಸೇವೆ ಮಾಡುವವನಂತೆ ಇರಲಿ.</verse>
				<verse number="27">ಯಾರು ದೊಡ್ಡವನು? ಊಟಕ್ಕೆ ಕುಳಿತುಕೊಂಡಿರುವವನೋ ಅಥವಾ ಸೇವೆ ಮಾಡುವವನೋ? ಊಟಕ್ಕೆ ಕುಳಿತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.</verse>
				<verse number="28">ನೀವೇ, ನನ್ನ ಕಷ್ಟಗಳಲ್ಲಿ ನನ್ನೊಂದಿಗೆ ನಿಂತವರು.</verse>
				<verse number="29">ನನ್ನ ತಂದೆ ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ, ನಾನೂ ನಿಮಗೆ ರಾಜ್ಯವನ್ನು ನೇಮಕ ಮಾಡುತ್ತೇನೆ.</verse>
				<verse number="30">ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ಊಟಮಾಡಿ ಪಾನೀಯವನ್ನು ಸೇವಿಸುವಿರಿ ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.</verse>
				<verse number="31">“ಸೀಮೋನನೇ, ಸೀಮೋನನೇ, ಇಗೋ, ಸೈತಾನನು ನಿಮ್ಮೆಲ್ಲರನ್ನೂ ಗೋಧಿಯಂತೆ ತೂರಬೇಕೆಂದು ಅಪ್ಪಣೆ ಕೇಳಿದ್ದಾನೆ.</verse>
				<verse number="32">ಆದರೆ ನಿನ್ನ ನಂಬಿಕೆಯು ಕುಂದದಂತೆ ನಾನು ನಿನಗೋಸ್ಕರ ಬೇಡಿಕೊಂಡಿದ್ದೇನೆ. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ಬಲಪಡಿಸು,” ಎಂದು ಹೇಳಿದರು.</verse>
				<verse number="33">ಆದರೆ ಅವನು ಯೇಸುವಿಗೆ, “ಕರ್ತದೇವರೇ, ನಾನು ನಿಮ್ಮ ಜೊತೆಯಲ್ಲಿ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ಸಿದ್ಧನಾಗಿದ್ದೇನೆ,” ಎಂದನು.</verse>
				<verse number="34">ಆಗ ಯೇಸು, “ಪೇತ್ರನೇ, ನೀನು ನನ್ನನ್ನು ಅರಿಯೆನೆಂದು ಮೂರು ಸಾರಿ ಅಲ್ಲಗಳೆಯುವುದಕ್ಕಿಂತ ಮುಂಚೆ, ಈ ದಿವಸ ಹುಂಜ ಕೂಗುವುದಿಲ್ಲ ಎಂದು ನಿನಗೆ ಹೇಳುತ್ತೇನೆ,” ಎಂದರು.</verse>
				<verse number="35">ನಂತರ ಯೇಸು ಅವರಿಗೆ, “ನಾನು ನಿಮ್ಮನ್ನು ಹಣದ ಚೀಲ, ಪ್ರಯಾಣದ ಚೀಲ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದಾಗ ನೀವು ಏನಾದರೂ ಕೊರತೆಪಟ್ಟಿರೋ?” ಎಂದು ಕೇಳಲು, ಶಿಷ್ಯರು, “ಏನೂ ಇಲ್ಲ,” ಎಂದರು.</verse>
				<verse number="36">ಆಗ ಯೇಸು ಅವರಿಗೆ, “ಆದರೆ ಈಗ ಹಣದ ಚೀಲ ಇದ್ದವನು ಅದನ್ನು ತೆಗೆದುಕೊಳ್ಳಲಿ. ಅದರಂತೆಯೇ ಪ್ರಯಾಣದ ಚೀಲ ಇದ್ದವನು ಅದನ್ನು ತೆಗೆದುಕೊಳ್ಳಲಿ. ಖಡ್ಗಯಿಲ್ಲದವನು ತನ್ನ ಬಟ್ಟೆಯನ್ನು ಮಾರಿ ಅದನ್ನು ಕೊಂಡುಕೊಳ್ಳಲಿ.</verse>
				<verse number="37">ಏಕೆಂದರೆ, ‘ಆತನು ಪಾತಕರಲ್ಲಿ ಒಬ್ಬನಂತೆ ಎಣಿಸಿಕೊಂಡನು,’ ಎಂಬುದಾಗಿ ಪವಿತ್ರ ವೇದದಲ್ಲಿ ಬರೆದಿರುವುದೆಲ್ಲವೂ ನೆರವೇರಬೇಕು ಎಂದು ನಾನು ನಿಮಗೆ ಹೇಳುತ್ತೇನೆ. ಹೌದು, ನನ್ನ ವಿಷಯವಾಗಿ ಬರೆದದ್ದು ನೆರವೇರಲಿದೆ,” ಎಂದರು.</verse>
				<verse number="38">ಶಿಷ್ಯರು, “ಕರ್ತದೇವರೇ, ಇಗೋ ಇಲ್ಲಿ ಎರಡು ಖಡ್ಗಗಳಿವೆ,” ಎಂದರು. ಅದಕ್ಕೆ ಯೇಸು ಅವರಿಗೆ, “ಅಷ್ಟು ಸಾಕು,” ಎಂದರು.</verse>
				<verse number="39">ಯೇಸು ಹೊರಗೆ ಬಂದು ತಮ್ಮ ವಾಡಿಕೆಯಂತೆ ಓಲಿವ್ ಗುಡ್ಡಕ್ಕೆ ಹೋದರು. ಯೇಸುವಿನ ಶಿಷ್ಯರೂ ಅವರನ್ನು ಹಿಂಬಾಲಿಸಿದರು.</verse>
				<verse number="40">ಯೇಸು ಆ ಸ್ಥಳದಲ್ಲಿದ್ದಾಗ ಅವರಿಗೆ, “ನೀವು ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ,” ಎಂದರು.</verse>
				<verse number="41">ಯೇಸು ಅವರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣಕಾಲೂರಿ,</verse>
				<verse number="42">“ತಂದೆಯೇ, ನಿಮ್ಮ ಚಿತ್ತವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸಿ. ಆದರೂ ನನ್ನ ಚಿತ್ತವಲ್ಲ ನಿಮ್ಮ ಚಿತ್ತದಂತೆಯೇ ಆಗಲಿ,” ಎಂದು ಪ್ರಾರ್ಥಿಸಿದರು.</verse>
				<verse number="43">ಆಗ ಪರಲೋಕದಿಂದ ಒಬ್ಬ ದೇವದೂತನು ಯೇಸುವಿಗೆ ಕಾಣಿಸಿಕೊಂಡು, ಅವರನ್ನು ಬಲಪಡಿಸುತ್ತಾ ಇದ್ದನು.</verse>
				<verse number="44">ಯೇಸು ವೇದನೆಯಲ್ಲಿದ್ದು ಬಹಳ ಆಸಕ್ತಿಯಿಂದ ಪ್ರಾರ್ಥಿಸಿದರು. ಯೇಸುವಿನ ಬೆವರು ನೆಲಕ್ಕೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳಂತಿದ್ದವು.</verse>
				<verse number="45">ಯೇಸು ಪ್ರಾರ್ಥನೆಮಾಡಿ ಎದ್ದ ಮೇಲೆ ತಮ್ಮ ಶಿಷ್ಯರ ಕಡೆಗೆ ಬಂದು, ಅವರು ದುಃಖದಿಂದ ಬಳಲಿ ನಿದ್ರೆ ಮಾಡುತ್ತಿರುವುದನ್ನು ಕಂಡು ಅವರಿಗೆ,</verse>
				<verse number="46">“ನೀವು ನಿದ್ರೆ ಮಾಡುವುದು ಏಕೆ? ಶೋಧನೆಗೆ ಒಳಗಾಗದಂತೆ ಎದ್ದು ಪ್ರಾರ್ಥಿಸಿರಿ,” ಎಂದರು.</verse>
				<verse number="47">ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾಗಿದ್ದ ಯೂದನು ಅವರಿಗೆ ಮುಂದಾಳಾಗಿ ಬಂದು, ಮುದ್ದಿಡುವುದಕ್ಕಾಗಿ ಯೇಸುವನ್ನು ಸಮೀಪಿಸಿದನು.</verse>
				<verse number="48">ಆಗ ಯೇಸು ಅವನಿಗೆ, “ಯೂದಾ, ಮುದ್ದಿನಿಂದ ಮನುಷ್ಯಪುತ್ರನಾದ ನನಗೆ ದ್ರೋಹಮಾಡುತ್ತೀಯೋ?” ಎಂದರು.</verse>
				<verse number="49">ಯೇಸುವಿನ ಸುತ್ತಲಿದ್ದ ಶಿಷ್ಯರು ಮುಂದೆ ಸಂಭವಿಸುವುದನ್ನು ಅರಿತು ಯೇಸುವಿಗೆ, “ಕರ್ತದೇವರೇ, ನಾವು ಖಡ್ಗದಿಂದ ಹೊಡೆಯೋಣವೋ?” ಎಂದು ಕೇಳಿದರು.</verse>
				<verse number="50">ಅವರಲ್ಲಿ ಒಬ್ಬನು ಮಹಾಯಾಜಕನ ಆಳನ್ನು ಹೊಡೆದು, ಅವನ ಬಲಗಿವಿಯನ್ನು ಕತ್ತರಿಸಿದನು.</verse>
				<verse number="51">ಆದರೆ ಯೇಸು, “ಸಾಕು ಇಂಥದ್ದು ಬೇಡ!” ಎಂದು ಹೇಳಿ, ಅವನ ಕಿವಿಯನ್ನು ಮುಟ್ಟಿ ಸ್ವಸ್ಥಮಾಡಿದರು.</verse>
				<verse number="52">ಆಗ ಯೇಸು ತಮ್ಮ ಬಳಿಗೆ ಬಂದಿದ್ದ ಮುಖ್ಯಯಾಜಕರಿಗೂ ದೇವಾಲಯದ ಕಾವಲಾಧಿಕಾರಿಗಳಿಗೂ ಹಿರಿಯರಿಗೂ, “ದಂಗೆಗಾರನನ್ನು ಹಿಡಿಯುವುದಕ್ಕಾಗಿ ಬಂದ ಹಾಗೆ ಖಡ್ಗಗಳಿಂದಲೂ ದೊಣ್ಣೆಗಳಿಂದಲೂ ನೀವು ಹೊರಟು ಬಂದಿರುವಿರೋ?</verse>
				<verse number="53">ನಾನು ನಿಮ್ಮ ಸಂಗಡ ಪ್ರತಿದಿನವೂ ದೇವಾಲಯದಲ್ಲಿದ್ದಾಗ, ನೀವು ನನ್ನನ್ನು ಹಿಡಿಯಲಿಲ್ಲ. ಆದರೆ ಇದು ನಿಮ್ಮ ಸಮಯ, ಅಂಧಕಾರ ದೊರೆತನ ಮಾಡುವ ಕಾಲ,” ಎಂದರು.</verse>
				<verse number="54">ಆಗ ಅವರು ಯೇಸುವನ್ನು ಬಂಧಿಸಿ, ಮಹಾಯಾಜಕನ ಭವನಕ್ಕೆ ಕರೆದುಕೊಂಡು ಬಂದರು. ಪೇತ್ರನೋ ದೂರದಿಂದ ಹಿಂಬಾಲಿಸಿದನು.</verse>
				<verse number="55">ಅವರು ಭವನದ ಹೊರಾಂಗಣದ ನಡುವೆ ಬೆಂಕಿಮಾಡಿ, ಅದರ ಸುತ್ತಲೂ ಒಟ್ಟಾಗಿ ಕುಳಿತುಕೊಂಡಾಗ ಪೇತ್ರನೂ ಅವರ ಸಂಗಡ ಸೇರಿ ಕುಳಿತುಕೊಂಡನು.</verse>
				<verse number="56">ಆದರೆ ಒಬ್ಬ ದಾಸಿಯು ಬೆಂಕಿಯ ಬಳಿಯಲ್ಲಿ ಕುಳಿತುಕೊಂಡಿದ್ದ ಪೇತ್ರನನ್ನು ದೃಷ್ಟಿಸಿ ನೋಡಿ, “ಈ ಮನುಷ್ಯನು ಸಹ ಯೇಸುವಿನ ಸಂಗಡ ಇದ್ದವನು,” ಎಂದಳು.</verse>
				<verse number="57">ಆದರೆ ಪೇತ್ರನು ಅಲ್ಲಗಳೆದು, “ಅಮ್ಮಾ, ನಾನು ಯೇಸುವನ್ನು ಅರಿಯೆನು,” ಎಂದನು.</verse>
				<verse number="58">ಸ್ವಲ್ಪ ಸಮಯದ ಮೇಲೆ ಮತ್ತೊಬ್ಬನು ಪೇತ್ರನನ್ನು ಕಂಡು, “ನೀನು ಸಹ ಅವರಲ್ಲಿ ಒಬ್ಬನು,” ಎಂದನು. ಅದಕ್ಕೆ ಪೇತ್ರನು, “ಇಲ್ಲಪ್ಪ, ನಾನಲ್ಲ,” ಎಂದನು.</verse>
				<verse number="59">ಹೆಚ್ಚು ಕಡಿಮೆ ಒಂದು ತಾಸು ಕಳೆದನಂತರ ಮತ್ತೊಬ್ಬನು, “ನಿಜವಾಗಿಯೂ ಇವನು ಸಹ ಯೇಸುವಿನೊಂದಿಗೆ ಇದ್ದವನು. ಏಕೆಂದರೆ ಇವನು ಗಲಿಲಾಯದವನೇ,” ಎಂದನು.</verse>
				<verse number="60">ಆದರೆ ಪೇತ್ರನು, “ಅಯ್ಯಾ, ನೀನು ಏನು ಹೇಳುತ್ತೀಯೋ ನನಗೆ ಅರ್ಥವಾಗುತ್ತಾಯಿಲ್ಲ,” ಎಂದನು. ಹೀಗೆ ಅವನು ಇನ್ನೂ ಮಾತನಾಡುತ್ತಿರುವಾಗಲೇ ಹುಂಜ ಕೂಗಿತು.</verse>
				<verse number="61">ಆಗ ಕರ್ತದೇವರು ಹಿಂದಿರುಗಿ ಪೇತ್ರನ ಕಡೆಗೆ ದಿಟ್ಟಿಸಿ ನೋಡಿದರು. “ಹುಂಜ ಕೂಗುವುದಕ್ಕಿಂತ ಮುಂಚಿತವಾಗಿ ಮೂರು ಸಾರಿ ನೀನು ನನ್ನನ್ನು ನಿರಾಕರಿಸುವೆ,” ಎಂದು ಕರ್ತದೇವರು ತನಗೆ ಹೇಳಿದ್ದ ಮಾತನ್ನು ಪೇತ್ರನು ಜ್ಞಾಪಕಮಾಡಿಕೊಂಡು</verse>
				<verse number="62">ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.</verse>
				<verse number="63">ಯೇಸುವನ್ನು ಕಾಯುತ್ತಿದ್ದ ಜನರು, ಹಾಸ್ಯಮಾಡಿ ಅವರನ್ನು ಹೊಡೆದರು.</verse>
				<verse number="64">ಇದಲ್ಲದೆ ಅವರು ಯೇಸುವಿನ ಕಣ್ಣಿಗೆ ಬಟ್ಟೆ ಕಟ್ಟಿ, ಅವರ ಮುಖದ ಮೇಲೆ ಹೊಡೆದು ಯೇಸುವಿಗೆ, “ನಿನ್ನನ್ನು ಹೊಡೆದವರು ಯಾರು? ಪ್ರವಾದನೆ ಹೇಳು,” ಎಂದರು.</verse>
				<verse number="65">ಅವರು ಯೇಸುವಿಗೆ ವಿರೋಧವಾಗಿ ಅನೇಕ ದೂಷಣೆಯ ಮಾತುಗಳನ್ನಾಡಿದರು.</verse>
				<verse number="66">ಬೆಳಗಾದ ಕೂಡಲೇ ಜನರ ಹಿರಿಯರೂ ಮುಖ್ಯಯಾಜಕರೂ ನಿಯಮ ಬೋಧಕರೂ ಒಟ್ಟಾಗಿ ಬಂದು ಯೇಸುವನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ,</verse>
				<verse number="67">“ನೀನು ಆ ಕ್ರಿಸ್ತನೋ? ನಮಗೆ ಹೇಳು,” ಎಂದರು. ಯೇಸು ಅವರಿಗೆ, “ನಾನು ನಿಮಗೆ ಹೇಳಿದರೂ ನೀವು ನಂಬುವುದಿಲ್ಲ.</verse>
				<verse number="68">ನಾನು ನಿಮ್ಮನ್ನು ಕೇಳಿದರೂ ನೀವು ಉತ್ತರ ಕೊಡುವುದಿಲ್ಲ.</verse>
				<verse number="69">ಆದರೆ ಇಂದಿನಿಂದ ಮನುಷ್ಯಪುತ್ರನಾದ ನಾನು ಸರ್ವಶಕ್ತರಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡಿರುವೆನು,” ಎಂದರು.</verse>
				<verse number="70">ಆಗ ಅವರೆಲ್ಲರೂ, “ಹಾಗಾದರೆ ನೀನು ದೇವರ ಪುತ್ರನೋ?” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ, “ನಾನೇ ಆತನು ಎಂದು ನೀವೇ ಹೇಳುತ್ತಿದ್ದೀರಿ,” ಎಂದು ಉತ್ತರಕೊಟ್ಟರು.</verse>
				<verse number="71">ಆಗ ಅವರು, “ನಮಗೆ ಇನ್ನೇನು ಸಾಕ್ಷಿ ಬೇಕು? ನಾವೇ ಈತನ ಬಾಯಿಂದ ಕೇಳಿದ್ದೇವಲ್ಲಾ?” ಎಂದರು.</verse>
			</chapter>
			<chapter number="23">
				<verse number="1">ಆಗ ಅಲ್ಲಿ ಕೂಡಿದ್ದವರೆಲ್ಲರೂ ಎದ್ದು ಯೇಸುವನ್ನು ಪಿಲಾತನ ಬಳಿಗೆ ಕರೆದುಕೊಂಡು ಹೋದರು.</verse>
				<verse number="2">ಅವರು ಯೇಸುವಿನ ಮೇಲೆ ದೂರು ಹೇಳಲಾರಂಭಿಸಿ, “ಈ ನಮ್ಮ ಜನಾಂಗವು ದಂಗೆಯೇಳುವಂತೆಯೂ ತಾನೇ ಕ್ರಿಸ್ತನೆಂಬ ಒಬ್ಬ ಅರಸನಾಗಿದ್ದೇನೆಂದೂ ಹೇಳಿ ಕೈಸರನಿಗೆ ತೆರಿಗೆ ಕೊಡದಂತೆ ಈತನು ಅಡ್ಡಿಮಾಡುತ್ತಿರುವುದನ್ನೂ ನಾವು ಕಂಡಿದ್ದೇವೆ,” ಎಂದರು.</verse>
				<verse number="3">ಆಗ ಪಿಲಾತನು ಯೇಸುವಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಅದಕ್ಕೆ ಯೇಸು ಅವರಿಗೆ, “ನೀವೇ ಹೇಳುತ್ತಿದ್ದೀರಿ,” ಎಂದರು.</verse>
				<verse number="4">ತರುವಾಯ ಪಿಲಾತನು, ಮುಖ್ಯಯಾಜಕರಿಗೂ ಜನರಿಗೂ, “ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ,” ಎಂದನು.</verse>
				<verse number="5">ಅದಕ್ಕೆ ಅವರು, “ಈತನು ಗಲಿಲಾಯ ಪ್ರಾಂತ ಮೊದಲುಗೊಂಡು ಈ ಸ್ಥಳದವರೆಗೂ ಯೂದಾಯ ಪ್ರಾಂತದ ಎಲ್ಲಾ ಕಡೆಗೂ ಬೋಧಿಸುತ್ತಾ, ಜನರನ್ನು ಕ್ರಾಂತಿಗೆ ಪ್ರೇರೇಪಿಸುತ್ತಿದ್ದಾನೆ,” ಎಂದು ಒತ್ತಾಯ ಪೂರ್ವಕವಾಗಿ ಹೇಳಿದರು.</verse>
				<verse number="6">ಪಿಲಾತನು ಗಲಿಲಾಯದ ವಿಷಯವಾಗಿ ಕೇಳಿದಾಗ, “ಈ ಮನುಷ್ಯನು ಗಲಿಲಾಯದವನೋ?” ಎಂದು ವಿಚಾರಿಸಿದನು.</verse>
				<verse number="7">ಯೇಸು ಹೆರೋದನ ಅಧಿಕಾರಕ್ಕೆ ಸಂಬಂಧ ಪಟ್ಟವನೆಂದು ತಿಳಿದ ಕೂಡಲೇ ಅದೇ ಸಮಯದಲ್ಲಿ ಯೆರೂಸಲೇಮಿನಲ್ಲಿಯೇ ಇದ್ದ ಹೆರೋದನ ಬಳಿಗೆ ಯೇಸುವನ್ನು ಕಳುಹಿಸಿದನು.</verse>
				<verse number="8">ಹೆರೋದನು ಯೇಸುವನ್ನು ಕಂಡಾಗ, ಅತ್ಯಂತ ಸಂತೋಷಪಟ್ಟನು. ಏಕೆಂದರೆ ಅವನು ಯೇಸುವಿನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ, ಅವರನ್ನು ಕಾಣಲು ಬಹಳ ಕಾಲದಿಂದ ಆಶೆಪಟ್ಟಿದ್ದನು. ಅವರಿಂದಾಗುವ ಸೂಚಕಕಾರ್ಯವನ್ನು ಕಾಣಲು ನಿರೀಕ್ಷಿಸುತ್ತಿದ್ದನು.</verse>
				<verse number="9">ಅವನು ಯೇಸುವನ್ನು ಅನೇಕ ಪ್ರಶ್ನೆಗಳನ್ನು ಕೇಳಿದರೂ ಯೇಸು ಅವನಿಗೆ ಏನೂ ಉತ್ತರ ಕೊಡಲಿಲ್ಲ.</verse>
				<verse number="10">ಮುಖ್ಯಯಾಜಕರೂ ನಿಯಮ ಬೋಧಕರು ನಿಂತುಕೊಂಡು ಬಲವಾಗಿ ಯೇಸುವಿನ ಮೇಲೆ ದೂರುಗಳನ್ನು ಹೇಳುತ್ತಿದ್ದರು.</verse>
				<verse number="11">ಆಗ ಹೆರೋದನು ತನ್ನ ಸೈನಿಕರೊಂದಿಗೆ ಯೇಸುವನ್ನು ತಿರಸ್ಕರಿಸಿ, ಹಾಸ್ಯಮಾಡಿ, ಅವರ ಮೇಲೆ ರಾಜವಸ್ತ್ರವನ್ನು ಹೊದಿಸಿ ಅವರನ್ನು ತಿರುಗಿ ಪಿಲಾತನ ಬಳಿಗೆ ಕಳುಹಿಸಿದನು.</verse>
				<verse number="12">ಪಿಲಾತನೂ ಹೆರೋದನೂ ಅದೇ ದಿನದಲ್ಲಿ ಒಬ್ಬರಿಗೊಬ್ಬರು ಸ್ನೇಹಿತರಾದರು. ಏಕೆಂದರೆ ಅದುವರೆಗೂ ಅವರು ವೈರಿಗಳಾಗಿದ್ದರು.</verse>
				<verse number="13">ಪಿಲಾತನು ಮುಖ್ಯಯಾಜಕರನ್ನೂ ಅಧಿಕಾರಿಗಳನ್ನೂ ಜನರನ್ನೂ ಒಟ್ಟಾಗಿ ಕರೆಯಿಸಿ ಅವರಿಗೆ,</verse>
				<verse number="14">“ಜನರು ತಿರುಗಿ ಬೀಳುವಂತೆ ಮಾಡುತ್ತಾನೆಂದು ನೀವು ಈತನನ್ನು ನನ್ನ ಬಳಿಗೆ ತಂದಿದ್ದೀರಿ. ಇಗೋ, ನೀವು ಈತನ ಮೇಲೆ ತಂದಿರುವ ದೂರುಗಳನ್ನು ನಾನು ನಿಮ್ಮ ಮುಂದೆಯೇ ವಿಚಾರಿಸಿದಾಗ ಈತನಲ್ಲಿ ನನಗೆ ಯಾವ ಅಪರಾಧವೂ ಕಾಣಲಿಲ್ಲ.</verse>
				<verse number="15">ಮಾತ್ರವಲ್ಲದೆ, ಈತನನ್ನು ನಮ್ಮ ಬಳಿಗೆ ಕಳುಹಿಸಿದ ಹೆರೋದ ಅರಸನಿಗೂ ಸಹ ಈತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ. ಇಗೋ, ಈತನಲ್ಲಿ ಮರಣಕ್ಕೆ ಯೋಗ್ಯವಾದದ್ದೇನೂ ಕಾಣಲಿಲ್ಲ.</verse>
				<verse number="16">ಹೀಗಿರುವುದರಿಂದ ನಾನು ಈತನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು.</verse>
				<verse number="17">ಏಕೆಂದರೆ ಅಧಿಪತಿಯು ಸೆರೆಯಾಳು ಒಬ್ಬನನ್ನು ಹಬ್ಬದಲ್ಲಿ ಜನರಿಗೋಸ್ಕರ ಬಿಡಿಸುವುದು ಪದ್ಧತಿಯಾಗಿತ್ತು.</verse>
				<verse number="18">ಆಗ ಅವರೆಲ್ಲರೂ ಆ ಕ್ಷಣವೇ, “ಈತನಿಗೆ ಮರಣದಂಡನೆ ವಿಧಿಸಿರಿ, ನಮಗೆ ಬರಬ್ಬನನ್ನು ಬಿಡುಗಡೆಮಾಡು,” ಎಂದು ಬೊಬ್ಬೆಹಾಕಿದರು.</verse>
				<verse number="19">ಬರಬ್ಬನು ಪಟ್ಟಣದಲ್ಲಿ ನಡೆದ ದಂಗೆ ಮತ್ತು ಕೊಲೆಯ ನಿಮಿತ್ತ ಸೆರೆಯಲ್ಲಿ ಹಾಕಿದವನಾಗಿದ್ದನು.</verse>
				<verse number="20">ಪಿಲಾತನು ಯೇಸುವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿ ಮತ್ತೊಮ್ಮೆ ಜನರಲ್ಲಿ ಮನವಿ ಮಾಡಿಕೊಂಡನು.</verse>
				<verse number="21">ಅವರಾದರೋ, “ಈತನನ್ನು ಶಿಲುಬೆಗೆ ಹಾಕಿಸು, ಈತನನ್ನು ಶಿಲುಬೆಗೆ ಹಾಕಿಸು!” ಎಂದು ಆರ್ಭಟಿಸತೊಡಗಿದರು.</verse>
				<verse number="22">ಪಿಲಾತನು ಮೂರನೆಯ ಸಾರಿ ಅವರಿಗೆ, “ಏಕೆ? ಈತನು ಮಾಡಿದ ಅಪರಾಧವೇನು? ಈತನಲ್ಲಿ ಮರಣದಂಡನೆಗೆ ಕಾರಣವಾದದ್ದೇನೂ ನನಗೆ ಕಾಣಲಿಲ್ಲ. ಆದ್ದರಿಂದ ನಾನು ಈತನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು.</verse>
				<verse number="23">ಆದರೆ ಯೇಸುವನ್ನು ಶಿಲುಬೆಗೆ ಹಾಕಿಸಬೇಕೆಂದು ಜನರು ಆರ್ಭಟಿಸುತ್ತಾ, ಒತ್ತಾಯಮಾಡಿದರು. ಹೀಗೆ ಅವರ ಕೂಗಾಟವೇ ಗೆದ್ದಿತು.</verse>
				<verse number="24">ಪಿಲಾತನು ಅವರು ಕೇಳಿಕೊಂಡಂತೆಯೇ ಆಗಲಿ ಎಂದು ನಿರ್ಣಯಿಸಿದನು.</verse>
				<verse number="25">ಇದಲ್ಲದೆ ಪಿಲಾತನು ಜನರು ಬರಬ್ಬನನ್ನು ಎಂದರೆ, ದಂಗೆ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಿದವನನ್ನು ಅವರಿಗೆ ಬಿಟ್ಟುಕೊಟ್ಟು, ಯೇಸುವನ್ನೋ ಅವರ ಇಷ್ಟಕ್ಕೆ ಒಪ್ಪಿಸಿದನು.</verse>
				<verse number="26">ಸೈನಿಕರು ಯೇಸುವನ್ನು ತೆಗೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ ಕುರೇನೆದ ಸೀಮೋನನೆಂಬವನನ್ನು ಹಿಡಿದು, ಅವನ ಮೇಲೆ ಶಿಲುಬೆಯನ್ನು ಹೊರಿಸಿ, ಯೇಸುವಿನ ಹಿಂದೆ ಹೊತ್ತುಕೊಂಡು ಹೋಗುವಂತೆ ಮಾಡಿದರು.</verse>
				<verse number="27">ಜನರ ಮಹಾ ಸಮೂಹ ಯೇಸುವಿನ ಹಿಂದೆ ಹೊರಟಿತು. ಅವರಲ್ಲಿ ಯೇಸುವಿಗಾಗಿ ಶೋಕಿಸುತ್ತಾ, ಗೋಳಾಡುತ್ತಿದ್ದ ಮಹಿಳೆಯರು ಸಹ ಇದ್ದರು.</verse>
				<verse number="28">ಯೇಸು ಅವರ ಕಡೆಗೆ ತಿರುಗಿಕೊಂಡು, “ಯೆರೂಸಲೇಮಿನ ಪುತ್ರಿಯರೇ, ನನಗಾಗಿ ಅಳಬೇಡಿರಿ. ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿ ಅಳಿರಿ.</verse>
				<verse number="29">ಏಕೆಂದರೆ, ‘ಇಗೋ, ಬಂಜೆಯರೂ ಹೆರದವರೂ ಹಾಲು ಕುಡಿಸದವರೂ ಧನ್ಯರು,’ ಎಂದು ಜನರು ಹೇಳುವ ದಿವಸಗಳು ಬರುತ್ತವೆ.</verse>
				<verse number="30">ಆಗ ಅವರು, “ ‘ಬೆಟ್ಟಗಳಿಗೆ, “ನಮ್ಮ ಮೇಲೆ ಬೀಳಿರಿ!” ಗುಡ್ಡಗಳಿಗೆ, “ನಮ್ಮನ್ನು ಮುಚ್ಚಿಕೊಳ್ಳಿರಿ!” ’ ಎಂದು ಹೇಳಲಾರಂಭಿಸುವರು.</verse>
				<verse number="31">ಅವರು ಹಸಿ ಮರಕ್ಕೆ ಇವುಗಳನ್ನು ಮಾಡಿದರೆ, ಒಣ ಮರಕ್ಕೆ ಇನ್ನೇನು ಮಾಡಿಯಾರು?” ಎಂದರು.</verse>
				<verse number="32">ಅಪರಾಧಿಗಳಾದ ಬೇರೆ ಇಬ್ಬರನ್ನು ಕೂಡ ಯೇಸುವಿನೊಂದಿಗೆ ಮರಣದಂಡನೆಗಾಗಿ ಕರೆದುಕೊಂಡು ಹೋದರು.</verse>
				<verse number="33">ಅವರು “ತಲೆಬುರುಡೆಯ ಸ್ಥಳ” ಎಂದು ಕರೆಯಲಾಗುವ ಸ್ಥಳಕ್ಕೆ ಬಂದಾಗ, ಅಲ್ಲಿ ಯೇಸುವನ್ನು ಶಿಲುಬೆಗೆ ಹಾಕಿದರು. ಆ ಅಪರಾಧಿಗಳಲ್ಲಿ ಒಬ್ಬನನ್ನು ಯೇಸುವಿನ ಬಲಗಡೆಯಲ್ಲಿ ಮತ್ತೊಬ್ಬನನ್ನು ಅವರ ಎಡಗಡೆಯಲ್ಲಿ ಶಿಲುಬೆಗೆ ಹಾಕಿದರು.</verse>
				<verse number="34">ಆಗ ಯೇಸು, “ತಂದೆಯೇ, ಇವರನ್ನು ಕ್ಷಮಿಸಿ, ತಾವು ಏನು ಮಾಡುತ್ತಿದ್ದಾರೆಂದು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಉಡುಪನ್ನು ಚೀಟುಹಾಕಿ, ಹಂಚಿಕೊಂಡರು.</verse>
				<verse number="35">ಜನರು ನೋಡುತ್ತಾ ನಿಂತುಕೊಂಡಿದ್ದರು. ಅವರೊಂದಿಗೆ ಅಧಿಕಾರಿಗಳು ಸಹ ಯೇಸುವನ್ನು ಅಪಹಾಸ್ಯಮಾಡಿ, “ಬೇರೆಯವರನ್ನು ರಕ್ಷಿಸಿದ ಈತನು ದೇವರು ಆರಿಸಿಕೊಂಡ ಕ್ರಿಸ್ತನಾಗಿದ್ದರೆ, ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ,” ಎಂದರು.</verse>
				<verse number="36">ಸೈನಿಕರು ಸಹ ಯೇಸುವಿನ ಬಳಿಗೆ ಬಂದು ಅವರನ್ನು ಹಾಸ್ಯಮಾಡಿ ಯೇಸುವಿಗೆ ಹುಳಿರಸವನ್ನು ಕೊಟ್ಟು,</verse>
				<verse number="37">“ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೋ,” ಎಂದರು.</verse>
				<verse number="38">ಯೇಸುವಿನ ಶಿಲುಬೆಯ ಮೇಲ್ಗಡೆಯಲ್ಲಿ ಒಂದು ಲಿಖಿತ ಹೀಗಿತ್ತು: ಈತನು ಯೆಹೂದ್ಯರ ಅರಸನು.</verse>
				<verse number="39">ಶಿಲುಬೆಗೆ ಹಾಕಿದ್ದ ಅಪರಾಧಿಗಳಲ್ಲಿ ಒಬ್ಬನು, “ನೀನು ಕ್ರಿಸ್ತನಾಗಿದ್ದರೆ ನಿನ್ನನ್ನು ರಕ್ಷಿಸಿಕೊಂಡು, ನಮ್ಮನ್ನೂ ರಕ್ಷಿಸು,” ಎಂದು ಯೇಸುವನ್ನು ದೂಷಿಸಿದನು.</verse>
				<verse number="40">ಆದರೆ ಮತ್ತೊಬ್ಬ ಅಫರಾಧಿಯು ಅವನನ್ನು ಖಂಡಿಸುತ್ತಾ, “ನೀನು ಇದೇ ದಂಡನೆಗೆ ಗುರಿಯಾಗಿದ್ದರೂ ದೇವರಿಗೆ ಭಯಪಡುವುದಿಲ್ಲವೋ?</verse>
				<verse number="41">ನಮಗಾದರೋ ನಮ್ಮ ಕೃತ್ಯಕ್ಕೆ ತಕ್ಕ ಶಿಕ್ಷೆ ನ್ಯಾಯವಾಗಿ ಸಿಕ್ಕಿದೆ. ಈತನಾದರೋ ತಪ್ಪಾದದ್ದೇನೂ ಮಾಡಲಿಲ್ಲ,” ಎಂದನು.</verse>
				<verse number="42">ಬಳಿಕ ಅವನು, “ಯೇಸುವೇ, ನೀವು ನಿಮ್ಮ ರಾಜ್ಯದಲ್ಲಿ ಬರುವಾಗ ನನ್ನನ್ನು ನೆನಪುಮಾಡಿಕೊಳ್ಳಿರಿ,” ಎಂದನು.</verse>
				<verse number="43">ಆಗ ಯೇಸು ಅವನಿಗೆ, “ಈ ದಿನವೇ ನೀನು ನನ್ನ ಸಂಗಡ ಪರದೈಸಿನಲ್ಲಿರುವೆ ಎಂದು ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.</verse>
				<verse number="44">ಆಗ ಸುಮಾರು ಮಧ್ಯಾಹ್ನವಾಗಿತ್ತು, ಆ ಹೊತ್ತಿನಿಂದ ಮೂರು ಗಂಟೆಯವರೆಗೆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.</verse>
				<verse number="45">ಸೂರ್ಯನು ಕಳೆಗುಂದಿದನು ಮತ್ತು ದೇವಾಲಯದ ತೆರೆಯು ಹರಿದು ಎರಡು ಭಾಗವಾಯಿತು.</verse>
				<verse number="46">ಯೇಸು ಮಹಾಧ್ವನಿಯಿಂದ, “ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.</verse>
				<verse number="47">ಆಗ ಶತಾಧಿಪತಿಯು, ನಡೆದದ್ದನ್ನು ಕಂಡು, “ಈತನು ನೀತಿವಂತನೇ ಸರಿ,” ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.</verse>
				<verse number="48">ಆ ದೃಶ್ಯವನ್ನು ಕಾಣಲು ಬಂದ ಜನರು ನಡೆದ ಘಟನೆಗಳನ್ನು ಕಂಡು, ತಮ್ಮ ಎದೆಗಳನ್ನು ಬಡಿದುಕೊಂಡು ಹಿಂದಿರುಗಿ ಹೋದರು.</verse>
				<verse number="49">ಯೇಸುವಿಗೆ ಪರಿಚಯವಿದ್ದವರೆಲ್ಲರೂ ಗಲಿಲಾಯದಿಂದ ಅವರನ್ನು ಹಿಂಬಾಲಿಸಿದ ಸ್ತ್ರೀಯರೂ ದೂರದಲ್ಲಿ ನಿಂತು ಇವುಗಳನ್ನು ನೋಡುತ್ತಿದ್ದರು.</verse>
				<verse number="50">ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು, ಇವನು ಆಲೋಚನಾ ಸಭೆಯವನೂ ಒಳ್ಳೆಯವನೂ ಮತ್ತು ನೀತಿವಂತನೂ ಆಗಿದ್ದನು.</verse>
				<verse number="51">ಇವನು ಅವರ ತೀರ್ಮಾನಕ್ಕೂ ಕೃತ್ಯಕ್ಕೂ ಒಪ್ಪಿಕೊಂಡಿರಲಿಲ್ಲ. ಇವನು ಯೆಹೂದ್ಯರ ಪಟ್ಟಣವಾದ ಅರಿಮಥಾಯದವನೂ ದೇವರ ರಾಜ್ಯಕ್ಕಾಗಿ ಎದುರುನೋಡುವವನೂ ಆಗಿದ್ದನು.</verse>
				<verse number="52">ಇವನು ಪಿಲಾತನ ಬಳಿಗೆ ಹೋಗಿ, ಯೇಸುವಿನ ದೇಹವನ್ನು ಕೊಡಲು ಬೇಡಿಕೊಂಡನು.</verse>
				<verse number="53">ತರುವಾಯ ಇವನು ಶರೀರವನ್ನು ಕೆಳಗೆ ಇಳಿಸಿ, ನಾರುಬಟ್ಟೆಯಲ್ಲಿ ಸುತ್ತಿ, ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿ ಇಟ್ಟನು, ಅದರಲ್ಲಿ ಅದುವರೆಗೆ ಯಾರನ್ನೂ ಇಟ್ಟಿರಲಿಲ್ಲ.</verse>
				<verse number="54">ಅಂದು ಸಿದ್ಧತೆಯ ದಿನವಾಗಿತ್ತು. ಸಬ್ಬತ್ ದಿನ ಪ್ರಾರಂಭವಾಗಲಿತ್ತು.</verse>
				<verse number="55">ಗಲಿಲಾಯದಿಂದ ಯೇಸುವಿನೊಂದಿಗೆ ಬಂದ ಸ್ತ್ರೀಯರು ಅರಿಮಥಾಯದ ಯೋಸೇಫನೊಂದಿಗೆ ಹೋಗಿ, ಸಮಾಧಿಯನ್ನೂ ದೇಹವನ್ನು ಅದರಲ್ಲಿಟ್ಟ ರೀತಿಯನ್ನೂ ನೋಡಿದರು.</verse>
				<verse number="56">ಅವರು ಮನೆಗೆ ಹಿಂತಿರುಗಿ ಪರಿಮಳ ದ್ರವ್ಯವನ್ನೂ ಸುಗಂಧ ತೈಲವನ್ನೂ ಸಿದ್ಧಪಡಿಸಿಕೊಂಡರು; ಆದರೆ ಮೋಶೆಯ ಆಜ್ಞಾನುಸಾರವಾಗಿ ಸಬ್ಬತ್ ದಿನದಲ್ಲಿ ವಿಶ್ರಮಿಸಿಕೊಂಡರು.</verse>
			</chapter>
			<chapter number="24">
				<verse number="1">ವಾರದ ಮೊದಲನೆಯ ದಿನದ, ಬೆಳಗಿನ ಜಾವದಲ್ಲಿ, ಆ ಸ್ತ್ರೀಯರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಹೋದರು.</verse>
				<verse number="2">ಆಗ ಸಮಾಧಿಯಿಂದ ಬಂಡೆ ಉರುಳಿಸಲಾಗಿದ್ದನ್ನು ಅವರು ಕಂಡರು,</verse>
				<verse number="3">ಅವರು ಅದರ ಒಳಗೆ ಪ್ರವೇಶಿಸಿದಾಗ, ಅಲ್ಲಿ ಕರ್ತದೇವರು ಯೇಸುವಿನ ದೇಹವನ್ನು ಕಾಣಲಿಲ್ಲ.</verse>
				<verse number="4">ಅವರು ಬಹಳವಾಗಿ ಗಲಿಬಿಲಿಗೊಂಡರು. ಆಗ ಮಿಂಚಿನಂತೆ ಹೊಳೆಯುವ ವಸ್ತ್ರಗಳನ್ನು ಧರಿಸಿದ್ದ ಇಬ್ಬರು ಪುರುಷರು ಫಕ್ಕನೆ ಅವರ ಬಳಿ ನಿಂತಿದ್ದರು.</verse>
				<verse number="5">ಆ ಸ್ತ್ರೀಯರು ಭಯಪಟ್ಟು ತಮ್ಮ ದೃಷ್ಟಿಯನ್ನು ನೆಲದ ಕಡೆಗೆ ನಾಟಿರಲು, ಆ ಪುರುಷರು ಅವರಿಗೆ, “ಜೀವಿಸುವವರನ್ನು ಸತ್ತವರೊಳಗೆ ನೀವು ಏಕೆ ಹುಡುಕುತ್ತೀರಿ?</verse>
				<verse number="6">ಅವರು ಇಲ್ಲಿಲ್ಲ; ಜೀವಂತರಾಗಿ ಎದ್ದಿದ್ದಾರೆ! ಅವರು ಇನ್ನೂ ಗಲಿಲಾಯದಲ್ಲಿದ್ದಾಗಲೇ:</verse>
				<verse number="7">‘ಮನುಷ್ಯಪುತ್ರನಾದ ನಾನು ಪಾಪಿಷ್ಠರ ಕೈಗೆ ಒಪ್ಪಿಸಿದವನಾಗಿ, ಶಿಲುಬೆಗೆ ಹಾಕಲಾಗಿ ಮೂರನೆಯ ದಿನದಲ್ಲಿ ತಿರುಗಿ ಜೀವಂತನಾಗಿ ಏಳುವೆನು,’ ಎಂದು ನಿಮಗೆ ಹೇಳಿದ್ದನ್ನು ನೀವು ನೆನಪುಮಾಡಿಕೊಳ್ಳಿರಿ,” ಎಂದರು.</verse>
				<verse number="8">ಆಗ ಆ ಸ್ತ್ರೀಯರು ಯೇಸುವಿನ ಮಾತುಗಳನ್ನು ನೆನಪು ಮಾಡಿಕೊಂಡರು.</verse>
				<verse number="9">ಸಮಾಧಿಯಿಂದ ಆ ಸ್ತ್ರೀಯರು ಹಿಂತಿರುಗಿ ಹೋಗಿ, ಆ ಹನ್ನೊಂದು ಮಂದಿಗೂ ಉಳಿದವರೆಲ್ಲರಿಗೂ ಈ ಎಲ್ಲಾ ವಿಷಯಗಳನ್ನು ತಿಳಿಸಿದರು.</verse>
				<verse number="10">ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿ ಮರಿಯಳು ಮತ್ತು ಅವರೊಂದಿಗಿದ್ದ ಬೇರೆ ಸ್ತ್ರೀಯರು ಅಪೊಸ್ತಲರಿಗೆ ಈ ವಿಷಯಗಳನ್ನು ಹೇಳಿದರು.</verse>
				<verse number="11">ಅವರಿಗಾದರೋ ಈ ಸ್ತ್ರೀಯರು ಹೇಳಿದ್ದು ಕಟ್ಟು ಕಥೆಗಳಂತೆ ಕಂಡವು, ಅವರು ಅವುಗಳನ್ನು ನಂಬಲಿಲ್ಲ.</verse>
				<verse number="12">ಆಗ ಪೇತ್ರನು ಎದ್ದು, ಸಮಾಧಿ ಬಳಿಗೆ ಓಡಿಹೋಗಿ, ಅದರೊಳಗೆ ಬಗ್ಗಿ ನೋಡಿದಾಗ, ಅಲ್ಲಿ ನಾರುಬಟ್ಟೆಗಳು ಮಾತ್ರ ಬಿದ್ದಿರುವುದನ್ನು ಕಂಡು ನಡೆದ ಸಂಭವಕ್ಕಾಗಿ ತನ್ನೊಳಗೆ ಆಶ್ಚರ್ಯಪಡುತ್ತಾ ಹೊರಟುಹೋದನು.</verse>
				<verse number="13">ಅದೇ ದಿನ ಶಿಷ್ಯರಲ್ಲಿ ಇಬ್ಬರು ಯೆರೂಸಲೇಮಿನಿಂದ ಸುಮಾರು ಹನ್ನೊಂದು ಕಿಲೋಮೀಟರು ದೂರದಲ್ಲಿದ್ದ ಎಮ್ಮಾಹು ಎಂಬ ಹಳ್ಳಿಗೆ ಹೋಗುತ್ತಿದ್ದರು.</verse>
				<verse number="14">ಅವರು ನಡೆದ ಈ ಎಲ್ಲಾ ಸಂಭವಗಳ ಕುರಿತಾಗಿ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಿದ್ದರು.</verse>
				<verse number="15">ಅವರು ಮಾತನಾಡಿಕೊಂಡು ಚರ್ಚಿಸುತ್ತಾ ಹೋಗಲು, ಯೇಸು ತಾವೇ ಅವರನ್ನು ಸಮೀಪಿಸಿ ಅವರ ಜೊತೆಯಲ್ಲಿ ಹೋದರು;</verse>
				<verse number="16">ಆದರೆ ಅವರಿಗೆ ತಿಳಿಯದ ಹಾಗೆ ಕಣ್ಣಿಗೆ ಮರೆಯಾಗಿದ್ದರಿಂದ ಅವರು ಯೇಸುವಿನ ಗುರುತು ಹಿಡಿಯಲಿಲ್ಲ.</verse>
				<verse number="17">ಆಗ ಯೇಸು ಅವರಿಗೆ, “ನೀವು ದಾರಿಯಲ್ಲಿ ಒಬ್ಬರಿಗೊಬ್ಬರು ಚರ್ಚೆಮಾಡಿಕೊಂಡು ಹೋಗುತ್ತಿದ್ದೀರಲ್ಲಾ ಏನು ವಿಷಯ?” ಎಂದು ಕೇಳಿದರು. ಅವರು ತಕ್ಷಣವೇ ನಿಂತರು, ಅವರ ಮುಖ ದುಖಃಭರಿತವಾಗಿತ್ತು.</verse>
				<verse number="18">ಆಗ ಅವರಲ್ಲಿ ಒಬ್ಬನಾದ, ಕ್ಲೆಯೊಫ ಎಂಬುವನು ಯೇಸುವಿಗೆ, “ಇತ್ತೀಚೆಗೆ ಯೆರೂಸಲೇಮಿನೊಳಗೆ ನಡೆದಿರುವ ಘಟನೆಗಳನ್ನು ತಿಳಿಯದ ಪರಸ್ಥಳದವನು ನೀನೊಬ್ಬನೇ ಆಗಿದ್ದೀಯಾ?” ಎಂದು ಕೇಳಿದನು.</verse>
				<verse number="19">ಅದಕ್ಕೆ ಯೇಸು ಅವರಿಗೆ, “ಯಾವ ಘಟನೆ?” ಎಂದು ಕೇಳಲು, ಅವರು ಯೇಸುವಿಗೆ, “ನಜರೇತಿನ ಯೇಸುವಿನ ವಿಷಯಗಳೇ, ಅವರು ಕೃತ್ಯಗಳಲ್ಲಿಯೂ ಮಾತುಗಳಲ್ಲಿಯೂ ದೇವರ ದೃಷ್ಟಿಯಲ್ಲಿಯೂ ಜನರೆಲ್ಲರ ದೃಷ್ಟಿಯಲ್ಲಿಯೂ ಬಹುಶಕ್ತಿವಂತರಾಗಿದ್ದ ಪ್ರವಾದಿಯಾಗಿದ್ದರು.</verse>
				<verse number="20">ಮುಖ್ಯಯಾಜಕರೂ ನಮ್ಮ ಅಧಿಕಾರಿಗಳೂ ಯೇಸುವನ್ನು ಮರಣದಂಡನೆಗೆ ಒಪ್ಪಿಸಿಕೊಟ್ಟು, ಅವರನ್ನು ಶಿಲುಬೆಗೆ ಹಾಕಿದರು.</verse>
				<verse number="21">ಆದರೆ ಇಸ್ರಾಯೇಲರನ್ನು ವಿಮೋಚಿಸುವವರು ಆ ಯೇಸುವೇ ಎಂದು ನಾವು ನಂಬಿಕೊಂಡಿದ್ದೆವು. ಇದಲ್ಲದೆ ಈ ಘಟನೆಗಳು ನಡೆದು ಇದು ಮೂರನೆಯ ದಿನವಾಗಿದೆ.</verse>
				<verse number="22">ನಮ್ಮವರಲ್ಲಿ, ಕೆಲವು ಸ್ತ್ರೀಯರು ಇಂದು ಬೆಳಗಿನ ಜಾವದಲ್ಲಿ ಸಮಾಧಿಗೆ ಹೋಗಿದ್ದರು.</verse>
				<verse number="23">ಅಲ್ಲಿ ಅವರು ಯೇಸುವಿನ ದೇಹವನ್ನು ಕಾಣದೆ ಬಂದು, ಯೇಸು ಜೀವದಿಂದ ಎದ್ದಿದ್ದಾರೆ, ಎಂದು ಹೇಳಿದ ದೇವದೂತರನ್ನೂ ಕಂಡಿದ್ದ ದೃಶ್ಯವನ್ನೂ ನಮಗೆ ಹೇಳಿದರು.</verse>
				<verse number="24">ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ, ಆ ಸ್ತ್ರೀಯರು ಹೇಳಿದ್ದನ್ನೇ ಕಂಡರು. ಆದರೆ ಅವರು ಯೇಸುವನ್ನು ಮಾತ್ರ ಕಾಣಲಿಲ್ಲ,” ಎಂದರು.</verse>
				<verse number="25">ಆಗ ಯೇಸು ಅವರಿಗೆ, “ಎಂಥ ಬುದ್ಧಿಹೀನರು ನೀವು, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವುದರಲ್ಲಿ ಮಂದ ಹೃದಯದವರೇ!</verse>
				<verse number="26">ಶ್ರಮೆಗಳನ್ನು ಅನುಭವಿಸಿದ ಮೇಲೆ ಕ್ರಿಸ್ತನು ಮಹಿಮೆಯಲ್ಲಿ ಪ್ರವೇಶಿಸುವುದು ಅಗತ್ಯವಾಗಿತ್ತಲ್ಲವೇ?” ಎಂದು ಹೇಳಿ,</verse>
				<verse number="27">ಮೋಶೆಯ ಮತ್ತು ಎಲ್ಲಾ ಪ್ರವಾದಿಗಳಿಂದ ಆರಂಭಿಸಿ, ಪವಿತ್ರ ವೇದಗಳಲ್ಲಿ ತನ್ನ ವಿಷಯವಾಗಿ ಬರೆದವುಗಳನ್ನು ಯೇಸು ಅವರಿಗೆ ವಿವರಿಸಿದರು.</verse>
				<verse number="28">ಅವರು ಹೋಗಬೇಕಾಗಿದ್ದ ಹಳ್ಳಿಯನ್ನು ಸಮೀಪಿಸುತ್ತಿದ್ದಾಗ, ಯೇಸು ಮುಂದೆ ಹೋಗುವವರಂತೆ ವರ್ತಿಸಿದರು.</verse>
				<verse number="29">ಆದರೆ ಅವರು ಯೇಸುವಿಗೆ, “ನಮ್ಮೊಂದಿಗೆ ಇರು, ಈಗ ಸಂಜೆಯಾಯಿತು. ಕತ್ತಲಾಯಿತು,” ಎಂದು ಹೇಳಿ, ಆತನನ್ನು ಬಲವಂತ ಮಾಡಿದರು. ಆಗ ಯೇಸು ಅವರೊಂದಿಗೆ ಇರುವುದಕ್ಕಾಗಿ ಹೋದರು.</verse>
				<verse number="30">ಯೇಸು ಆ ಇಬ್ಬರು ಶಿಷ್ಯರೊಂದಿಗೆ ಊಟಕ್ಕೆ ಕುಳಿತುಕೊಂಡಿರಲು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ, ಮುರಿದು ಅವರಿಗೆ ಕೊಟ್ಟರು.</verse>
				<verse number="31">ಆಗ ಅವರ ಕಣ್ಣುಗಳು ತೆರೆದವು. ಅವರು ಯೇಸುವಿನ ಗುರುತು ಹಿಡಿದರು ಮತ್ತು ಯೇಸು ಅವರ ದೃಷ್ಟಿಗೆ ಅದೃಶ್ಯರಾದರು.</verse>
				<verse number="32">ಅವರು ಒಬ್ಬರಿಗೊಬ್ಬರು, “ಅವರು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ, ಪವಿತ್ರ ವೇದವನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ಬೆಂಕಿಯಂತೆ ದಹಿಸಿತಲ್ಲವೇ?” ಎಂದುಕೊಂಡರು.</verse>
				<verse number="33">ಆ ಇಬ್ಬರು ಶಿಷ್ಯರು ಅದೇ ಗಳಿಗೆಯಲ್ಲಿ ಎದ್ದು ಯೆರೂಸಲೇಮಿಗೆ ಹಿಂದಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರೊಂದಿಗಿದ್ದವರೂ ಒಟ್ಟಾಗಿ ಕೂಡಿಕೊಂಡಿರುವುದನ್ನು ಕಂಡರು.</verse>
				<verse number="34">ಅಲ್ಲಿದ್ದವರು, “ಇದು ನಿಜವೇ! ಕರ್ತದೇವರು ಜೀವಂತರಾಗಿ ಎದ್ದಿದ್ದಾರೆ ಮತ್ತು ಸೀಮೋನನಿಗೆ ಕಾಣಿಸಿಕೊಂಡಿದ್ದಾರೆ,” ಎಂದು ಹೇಳಿದರು.</verse>
				<verse number="35">ಆಗ ಆ ಇಬ್ಬರು ಶಿಷ್ಯರು ದಾರಿಯಲ್ಲಿ ನಡೆದವುಗಳನ್ನೂ ರೊಟ್ಟಿ ಮುರಿಯುವುದರಲ್ಲಿ ಅವರು ಹೇಗೆ ಯೇಸುವಿನ ಗುರುತು ಹಿಡಿದರೆಂದೂ ವಿವರಿಸಿದರು.</verse>
				<verse number="36">ಅವರೆಲ್ಲರೂ ಹೀಗೆ ಮಾತನಾಡುತ್ತಿರುವಾಗ, ಯೇಸು ತಾವೇ ಅವರ ನಡುವೆ ನಿಂತು ಅವರಿಗೆ, “ನಿಮಗೆ ಸಮಾಧಾನವಾಗಲಿ,” ಎಂದರು.</verse>
				<verse number="37">ಅವರು ತಾವು ಕಾಣುತ್ತಿರುವುದು ಭೂತವೆಂದು ಭಾವಿಸಿ, ದಿಗಿಲುಬಿದ್ದು ಭಯಹಿಡಿದವರಾದರು.</verse>
				<verse number="38">ಆದರೆ ಯೇಸು ಅವರಿಗೆ, “ಏಕೆ ನೀವು ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯಗಳಲ್ಲಿ ಸಂಶಯಗಳು ಹುಟ್ಟುವುದು ಏಕೆ?</verse>
				<verse number="39">ನನ್ನ ಕೈಗಳನ್ನು ಮತ್ತು ನನ್ನ ಕಾಲುಗಳನ್ನು ನೋಡಿರಿ. ನಾನೇ ಆತನು! ನನ್ನನ್ನು ಮುಟ್ಟಿ ನೋಡಿರಿ; ನೀವು ಕಾಣುವಂತೆ ನನಗಿರುವ ಮಾಂಸ ಮತ್ತು ಎಲುಬುಗಳು ಭೂತಕ್ಕೆ ಇಲ್ಲ,” ಎಂದರು.</verse>
				<verse number="40">ಹೀಗೆ ಯೇಸು ಮಾತನಾಡಿದ ಮೇಲೆ, ತನ್ನ ಕೈಗಳನ್ನು ತನ್ನ ಕಾಲುಗಳನ್ನು ಅವರಿಗೆ ತೋರಿಸಿದರು.</verse>
				<verse number="41">ಆದರೆ ಅವರು ಸಂತೋಷದ ನಿಮಿತ್ತವಾಗಿ ಇನ್ನೂ ನಂಬದೆ ಆಶ್ಚರ್ಯಪಡುತ್ತಿರುವಾಗ ಯೇಸು ಅವರಿಗೆ, “ನಿಮ್ಮಲ್ಲಿ ಆಹಾರವೇನಾದರೂ ಇದೆಯೋ?” ಎಂದು ಕೇಳಿದರು.</verse>
				<verse number="42">ಅವರು ಯೇಸುವಿಗೆ ಒಂದು ತುಂಡು ಸುಟ್ಟ ಮೀನನ್ನು ಕೊಟ್ಟರು.</verse>
				<verse number="43">ಯೇಸು ತೆಗೆದುಕೊಂಡು ಅವರ ಮುಂದೆ ತಿಂದರು.</verse>
				<verse number="44">ಯೇಸು ಶಿಷ್ಯರಿಗೆ, “ಮೋಶೆಯ ನಿಯಮದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆದಿರುವುದೆಲ್ಲವೂ ನೆರವೇರುವುದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ನಿಮಗೆ ಹೇಳಿದ್ದೇನೆ,” ಎಂದರು.</verse>
				<verse number="45">ತರುವಾಯ ಅವರು ಪವಿತ್ರ ವೇದಗಳನ್ನು ಅರ್ಥಮಾಡಿಕೊಳ್ಳುವಂತೆ ಯೇಸು ಅವರ ಬುದ್ಧಿಯನ್ನು ತೆರೆದರು.</verse>
				<verse number="46">ಯೇಸು ಅವರಿಗೆ, “ಕ್ರಿಸ್ತನು ಹೀಗೆ ಬಾಧೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವುದು ಅಗತ್ಯವಾಗಿತ್ತೆಂತಲೂ</verse>
				<verse number="47">ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವರೊಳಗೆ ಆತನ ಹೆಸರಿನಲ್ಲಿ ಪಶ್ಚಾತ್ತಾಪಪಟ್ಟು ಮತ್ತು ಪಾಪಗಳ ಕ್ಷಮಾಪಣೆ ಸಾರಬೇಕೆಂತಲೂ ಬರೆಯಲಾಗಿದೆ.</verse>
				<verse number="48">ಇವುಗಳ ವಿಷಯವಾಗಿ ನೀವು ಸಾಕ್ಷಿಗಳಾಗಿದ್ದೀರಿ.</verse>
				<verse number="49">ಇಗೋ, ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮಗೆ ಕಳುಹಿಸುವೆನು; ಆದರೆ ನೀವು ಪರಲೋಕದ ಶಕ್ತಿಯನ್ನು ಹೊದಿಸುವ ತನಕ, ಈ ಪಟ್ಟಣದಲ್ಲಿಯೇ ಕಾದುಕೊಂಡಿರಿ,” ಎಂದರು.</verse>
				<verse number="50">ಯೇಸು ಶಿಷ್ಯರನ್ನು ಬೇಥಾನ್ಯದವರೆಗೆ ಕರೆದುಕೊಂಡು ಹೋಗಿ, ತಮ್ಮ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದರು.</verse>
				<verse number="51">ಯೇಸು ಅವರನ್ನು ಆಶೀರ್ವದಿಸುತ್ತಿರುವಾಗಲೇ ಅವರನ್ನು ಬಿಟ್ಟು ಮೇಲೆ ಪರಲೋಕಕ್ಕೆ ಏರಿದರು.</verse>
				<verse number="52">ಆಗ ಶಿಷ್ಯರು ಯೇಸುವನ್ನು ಆರಾಧಿಸಿ, ಬಹು ಸಂತೋಷದಿಂದ ಯೆರೂಸಲೇಮಿಗೆ ಹಿಂದಿರುಗಿದರು.</verse>
				<verse number="53">ಅವರು ಯಾವಾಗಲೂ ದೇವಾಲಯದಲ್ಲಿ, ದೇವರನ್ನು ಸ್ತುತಿಸುತ್ತಾ ಇದ್ದರು.</verse>
			</chapter>
		</book>
		<book number="43">
			<chapter number="1">
				<verse number="1">ಆದಿಯಲ್ಲಿ ವಾಕ್ಯವಿತ್ತು, ಆ ವಾಕ್ಯವು ದೇವರ ಬಳಿಯಲ್ಲಿತ್ತು, ಆ ವಾಕ್ಯವು ದೇವರಾಗಿತ್ತು.</verse>
				<verse number="2">ಆ ವಾಕ್ಯವೆಂಬುವವರು ಆದಿಯಲ್ಲಿ ದೇವರ ಬಳಿಯಲ್ಲಿದ್ದರು.</verse>
				<verse number="3">ಆ ವಾಕ್ಯವೆಂಬುವವರ ಮೂಲಕವಾಗಿಯೇ ಸಮಸ್ತವೂ ಸೃಷ್ಟಿಯಾಯಿತು. ಸೃಷ್ಟಿಯಾದವುಗಳಲ್ಲಿ ಯಾವುದೂ ಅವರಿಲ್ಲದೆ ಸೃಷ್ಟಿಯಾಗಲಿಲ್ಲ.</verse>
				<verse number="4">ಅವರಲ್ಲಿ ಜೀವವಿತ್ತು. ಆ ಜೀವವು ಮಾನವರಿಗೆ ಬೆಳಕಾಗಿತ್ತು.</verse>
				<verse number="5">ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲೆಯು ಆ ಬೆಳಕನ್ನು ಅಡಗಿಸಲಿಲ್ಲ.</verse>
				<verse number="6">ದೇವರು ಕಳುಹಿಸಿದ ಒಬ್ಬ ಮನುಷ್ಯನಿದ್ದನು. ಅವನ ಹೆಸರು ಯೋಹಾನನು.</verse>
				<verse number="7">ತನ್ನ ಮೂಲಕ ಎಲ್ಲರು ವಿಶ್ವಾಸವಿಡುವಂತೆ ಅವನು ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ಕೊಡಲು ಯೋಹಾನನು ಸಾಕ್ಷಿಯಾಗಿ ಬಂದನು.</verse>
				<verse number="8">ಅವನೇ ಆ ಬೆಳಕಾಗಿರಲಿಲ್ಲ. ಆ ಬೆಳಕಿನ ವಿಷಯದಲ್ಲಿ ಸಾಕ್ಷಿಯಾಗಿ ಬಂದನಷ್ಟೇ.</verse>
				<verse number="9">ನಿಜ ಬೆಳಕು ಲೋಕಕ್ಕೆ ಬರುವುದಾಗಿತ್ತು. ಆ ಬೆಳಕೇ ಪ್ರತಿ ಮಾನವನಿಗೂ ಬೆಳಕನ್ನು ನೀಡುವುದಾಗಿತ್ತು.</verse>
				<verse number="10">ಆ ವಾಕ್ಯವೆಂಬುವವರು ಲೋಕದಲ್ಲಿದ್ದರು ಮತ್ತು ಲೋಕವು ಅವರ ಮೂಲಕ ಉಂಟಾಯಿತು. ಆದರೂ ಲೋಕವು ಅವರ ಗುರುತು ಹಿಡಿಯಲಿಲ್ಲ.</verse>
				<verse number="11">ಅವರು ತಮ್ಮ ಸ್ವಜನರ ಬಳಿಗೆ ಬಂದರು. ಆದರೆ ಸ್ವಜನರೇ ಅವರನ್ನು ಸ್ವೀಕರಿಸಲಿಲ್ಲ.</verse>
				<verse number="12">ಆದರೂ ಯಾರಾರು ಅವರನ್ನು ಸ್ವೀಕರಿಸಿದರೋ, ಅಂದರೆ ಅವರ ಹೆಸರಿನಲ್ಲಿ ವಿಶ್ವಾಸವಿಟ್ಟರೋ ಅವರೆಲ್ಲರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಕೊಟ್ಟರು.</verse>
				<verse number="13">ಇವರು ರಕ್ತಸಂಬಂಧದಿಂದಾಗಲಿ, ದೈಹಿಕ ಇಚ್ಛೆಯಿಂದಾಗಲಿ, ಪುರುಷನ ಇಚ್ಛೆಯಿಂದಾಗಲಿ ಹುಟ್ಟಿದವರಲ್ಲ, ದೇವರಿಂದಲೇ ಹುಟ್ಟಿದವರು.</verse>
				<verse number="14">ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.</verse>
				<verse number="15">“ಅವರನ್ನು ಕುರಿತು ಯೋಹಾನನು ಸಾಕ್ಷಿ ಕೊಡುತ್ತಾ, ‘ನನ್ನ ಬಳಿಕ ಬರುವವರು ನನಗಿಂತ ಮೊದಲೇ ಇದ್ದುದರಿಂದ ಅವರು ನನಗಿಂತಲೂ ಶ್ರೇಷ್ಠರು’ ಎಂದು ನಾನು ಹೇಳಿದವರು ಇವರೇ,” ಎಂದು ಘೋಷಿಸಿದನು.</verse>
				<verse number="16">ಅವರ ಪರಿಪೂರ್ಣತೆಯಿಂದ ನಾವೆಲ್ಲರೂ ಕೃಪೆಯ ಮೇಲೆ ಕೃಪೆಯನ್ನು ಪಡೆದೆವು.</verse>
				<verse number="17">ಏಕೆಂದರೆ ನಿಯಮವು ಮೋಶೆಯ ಮೂಲಕ ಕೊಡಲಾಯಿತು. ಕೃಪೆಯೂ ಸತ್ಯವೂ ಕ್ರಿಸ್ತ ಯೇಸುವಿನ ಮೂಲಕ ಬಂದವು.</verse>
				<verse number="18">ದೇವರನ್ನು ಯಾರೂ ಎಂದೂ ಕಂಡಿಲ್ಲ; ತಂದೆ ದೇವರ ಹೃದಯಕ್ಕೆ ಹತ್ತಿರವಾಗಿರುವ ಏಕೈಕ ಪುತ್ರ ಆಗಿರುವವರೂ ಸ್ವತಃ ದೇವರೂ ಆಗಿರುವವರೂ ತಂದೆಯನ್ನು ಪ್ರಕಟಪಡಿಸಿದ್ದಾರೆ.</verse>
				<verse number="19">ಯೆರೂಸಲೇಮಿನ ಯೆಹೂದ್ಯ ನಾಯಕರು, ಯಾಜಕರನ್ನು ಮತ್ತು ಲೇವಿಯರನ್ನು ಯೋಹಾನನ ಬಳಿಗೆ ಕಳುಹಿಸಿ, “ನೀನು ಯಾರು?” ಎಂದು ಕೇಳಿದರು.</verse>
				<verse number="20">ಅದಕ್ಕೆ ಯೋಹಾನನು, “ನಾನು ಕ್ರಿಸ್ತನಲ್ಲ” ಎಂದು ಅರಿಕೆಮಾಡಿ ಸಾಕ್ಷಿಕೊಟ್ಟನು.</verse>
				<verse number="21">ಅದಕ್ಕೆ ಅವರು, “ಹಾಗಾದರೆ ನೀನು ಎಲೀಯನೋ?” ಎಂದು ಕೇಳಿದರು. ಅದಕ್ಕೆ ಅವನು, “ನಾನು ಎಲೀಯನಲ್ಲ.” “ನೀನು ಆ ಪ್ರವಾದಿಯೋ?” ಎಂದು ಕೇಳಿದರು. ಅದಕ್ಕೆ ಅವನು, “ಅಲ್ಲ” ಎಂದನು.</verse>
				<verse number="22">ಅವರು, “ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಕೊಡುವಂತೆ ನಿನ್ನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದು ಕೇಳಿದರು.</verse>
				<verse number="23">ಅದಕ್ಕೆ ಯೋಹಾನನು, “ಪ್ರವಾದಿ ಯೆಶಾಯನು ಹೇಳಿದಂತೆ, ‘ಕರ್ತದೇವರ ಮಾರ್ಗವನ್ನು ಸಿದ್ಧಮಾಡಿರಿ,’ ಎಂದು ಅರಣ್ಯದಲ್ಲಿ ಕೂಗುವ ಸ್ವರವೇ ನಾನು, ” ಎಂದು ಹೇಳಿದನು.</verse>
				<verse number="24">ಬಂದಿದ್ದವರು ಫರಿಸಾಯರ ಕಡೆಯವರಾಗಿದ್ದರು.</verse>
				<verse number="25">ಅವರು ಯೋಹಾನನಿಗೆ, “ನೀನು ಕ್ರಿಸ್ತ ಇಲ್ಲವೆ ಎಲೀಯನಾಗಲಿ, ಆ ಪ್ರವಾದಿಯಾಗಲಿ ಆಗಿರದಿದ್ದರೆ ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು.</verse>
				<verse number="26">ಅದಕ್ಕೆ ಯೋಹಾನನು, “ನಾನು ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನೀವು ಅರಿಯದ ಒಬ್ಬ ವ್ಯಕ್ತಿ ನಿಮ್ಮ ನಡುವೆ ಇದ್ದಾರೆ.</verse>
				<verse number="27">ಅವರೇ ನನ್ನ ಬಳಿಕ ಬರುವವರು. ಅವರ ಪಾದರಕ್ಷೆಗಳ ದಾರವನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,” ಎಂದು ಉತ್ತರಕೊಟ್ಟನು.</verse>
				<verse number="28">ಇದೆಲ್ಲಾ ಯೋಹಾನನು ದೀಕ್ಷಾಸ್ನಾನ ಮಾಡಿಸುತ್ತಿದ್ದ ಯೊರ್ದನ್ ನದಿಯ ಆಚೆಕಡೆಯಲ್ಲಿರುವ ಬೇಥಾನ್ಯದಲ್ಲಿ ನಡೆಯಿತು.</verse>
				<verse number="29">ಮರುದಿನ ಯೇಸು ತನ್ನ ಕಡೆಗೆ ಬರುತ್ತಿರುವುದನ್ನು ಯೋಹಾನನು ಕಂಡು, “ಇಗೋ, ಲೋಕದ ಪಾಪವನ್ನು ತೆಗೆದುಹಾಕುವ ದೇವರ ಕುರಿಮರಿ,</verse>
				<verse number="30">‘ನನ್ನ ತರುವಾಯ ಬರುವವರು ನನಗಿಂತ ಮೊದಲೇ ಇದ್ದುದರಿಂದ ಅವರು ನನಗಿಂತಲೂ ಶ್ರೇಷ್ಠರು,’ ಎಂದು ನಾನು ಹೇಳಿದವರು ಇವರೇ.</verse>
				<verse number="31">ನನಗೂ ಇವರ ಗುರುತಿರಲಿಲ್ಲ. ಆದರೆ ಇವರನ್ನು ಇಸ್ರಾಯೇಲರಿಗೆ ಪ್ರಕಟಪಡಿಸುವುದಕ್ಕೊಸ್ಕರ ನಾನು ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುತ್ತಾ ಬಂದೆನು,” ಎಂದು ಹೇಳಿದನು.</verse>
				<verse number="32">ಯೋಹಾನನು ಸಾಕ್ಷಿಕೊಟ್ಟು, “ಪವಿತ್ರಾತ್ಮರು ಪರಲೋಕದಿಂದ ಪಾರಿವಾಳದಂತೆ ಇಳಿದುಬಂದು ಯೇಸುವಿನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು.</verse>
				<verse number="33">ನನಗೂ ಅವರ ಗುರುತಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಲು ನನ್ನನ್ನು ಕಳುಹಿಸಿದವರು, ‘ಯಾರ ಮೇಲೆ ಪವಿತ್ರಾತ್ಮರು ಇಳಿದುಬಂದು ನೆಲೆಸುವುದನ್ನು ನೀನು ನೋಡುವಿಯೋ ಅವರೇ ಪವಿತ್ರಾತ್ಮರಿಂದ ದೀಕ್ಷಾಸ್ನಾನ ಮಾಡಿಸುವವರು,’ ಎಂದು ತಿಳಿಸಿದರು.</verse>
				<verse number="34">ಈಗ ನಾನು ಕಂಡು, ಇವರೇ ದೇವರ ಪುತ್ರರು ಎಂದು ಸಾಕ್ಷಿ ನೀಡುತ್ತಿದ್ದೇನೆ,” ಎಂದು ಹೇಳಿದನು.</verse>
				<verse number="35">ಮರುದಿನ ಯೋಹಾನನು ಪುನಃ ತನ್ನ ಶಿಷ್ಯರಲ್ಲಿ ಇಬ್ಬರೊಂದಿಗೆ ನಿಂತುಕೊಂಡಿದ್ದನು.</verse>
				<verse number="36">ಆಗ ಯೇಸು ಹೋಗುತ್ತಿರುವುದನ್ನು ಕಂಡು ಅವನು, “ಇಗೋ, ದೇವರ ಕುರಿಮರಿ,” ಎಂದು ಹೇಳಿದನು.</verse>
				<verse number="37">ಆ ಇಬ್ಬರು ಶಿಷ್ಯರು ಅವನು ಹೇಳಿದ್ದನ್ನು ಕೇಳಿ ಯೇಸುವನ್ನು ಹಿಂಬಾಲಿಸಿದರು.</verse>
				<verse number="38">ಯೇಸು ಹಿಂತಿರುಗಿ ತನ್ನನ್ನು ಹಿಂಬಾಲಿಸುತ್ತಿದ್ದ ಅವರನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಲು, ಅವರು, “ಬೋಧಕರೇ, ನೀವು ವಾಸಿಸುವುದು ಎಲ್ಲಿ?” ಎಂದು ಕೇಳಿದರು.</verse>
				<verse number="39">ಯೇಸು ಅವರಿಗೆ, “ಬಂದು ನೋಡಿರಿ,” ಎಂದು ಹೇಳಲು, ಅವರು ಹೋಗಿ ಯೇಸು ವಾಸಿಸುತ್ತಿದ್ದ ಸ್ಥಳವನ್ನು ಕಂಡು ಆ ದಿವಸ ಅವರ ಸಂಗಡ ಇದ್ದರು. ಆಗ ಸಂಜೆ ಸುಮಾರು ನಾಲ್ಕು ಗಂಟೆಯಾಗಿತ್ತು.</verse>
				<verse number="40">ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ ಇಬ್ಬರಲ್ಲಿ ಸೀಮೋನ್ ಪೇತ್ರನ ಸಹೋದರ ಅಂದ್ರೆಯನು ಒಬ್ಬನಾಗಿದ್ದನು.</verse>
				<verse number="41">ಅಂದ್ರೆಯನು ಮೊದಲು ತನ್ನ ಸಹೋದರ ಸೀಮೋನನನ್ನು ಕಂಡು, “ನಾವು ಮೆಸ್ಸೀಯ ಆಗಿರುವವರನ್ನು ಕಂಡೆವು,” ಎಂದು ಹೇಳಿ,</verse>
				<verse number="42">ಅವನನ್ನು ಯೇಸುವಿನ ಬಳಿಗೆ ಕರೆತಂದನು. “ಮೆಸ್ಸೀಯ” ಎಂದರೆ ಕ್ರಿಸ್ತ ಎಂದು ಅರ್ಥ. ಯೇಸು ಅವನನ್ನು ನೋಡಿ, “ನೀನು ಯೋಹಾನನ ಮಗ ಸೀಮೋನನು. ನಿನ್ನನ್ನು ‘ಕೇಫ’ ಎಂದು ಕರೆಯುವರು,” ಎಂದು ಹೇಳಿದರು. “ಕೇಫ” ಎಂದರೆ ಪೇತ್ರ ಇಲ್ಲವೆ ಬಂಡೆ ಎಂದರ್ಥ.</verse>
				<verse number="43">ಯೇಸು ಮರುದಿನ ಗಲಿಲಾಯಕ್ಕೆ ಹೋಗಬೇಕೆಂದಿದ್ದಾಗ, ಅವರು ಫಿಲಿಪ್ಪನನ್ನು ಕಂಡು, “ನನ್ನನ್ನು ಹಿಂಬಾಲಿಸು,” ಎಂದರು.</verse>
				<verse number="44">ಫಿಲಿಪ್ಪನು, ಅಂದ್ರೆಯ ಮತ್ತು ಪೇತ್ರನ ಪಟ್ಟಣವಾದ ಬೇತ್ಸಾಯಿದಕ್ಕೆ ಸೇರಿದವನು.</verse>
				<verse number="45">ಫಿಲಿಪ್ಪನು ನತಾನಯೇಲನನ್ನು ಕಂಡು, “ಮೋಶೆಯ ನಿಯಮದಲ್ಲಿ ಸೂಚಿಸಿದವರೂ ಪ್ರವಾದಿಗಳೂ ಯಾರನ್ನು ಕುರಿತು ಬರೆದಿದ್ದಾರೋ ಅವರು ನಮಗೆ ಸಿಕ್ಕಿದ್ದಾರೆ. ಅವರೇ ಯೋಸೇಫನ ಪುತ್ರರಾಗಿರುವ ನಜರೇತಿನ ಯೇಸು,” ಎಂದನು.</verse>
				<verse number="46">“ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರಲು ಸಾಧ್ಯವೋ?” ಎಂದು ನತಾನಯೇಲನು ಕೇಳಲು, “ಬಂದು ನೋಡು,” ಎಂದು ಫಿಲಿಪ್ಪನು ಹೇಳಿದನು.</verse>
				<verse number="47">ನತಾನಯೇಲನು ತಮ್ಮ ಬಳಿಗೆ ಬರುವುದನ್ನು ಯೇಸು ಕಂಡು ಅವನ ವಿಷಯವಾಗಿ, “ಇವನು ನಿಜವಾದ ಇಸ್ರಾಯೇಲನು, ಇವನಲ್ಲಿ ಕಪಟವಿಲ್ಲ,” ಎಂದು ಹೇಳಿದರು.</verse>
				<verse number="48">ಅದಕ್ಕೆ ನತಾನಯೇಲನು, “ನೀವು ನನ್ನನ್ನು ಹೇಗೆ ಬಲ್ಲಿರಿ?” ಎಂದು ಕೇಳಲು, ಯೇಸು ಅವನಿಗೆ, “ಫಿಲಿಪ್ಪನು ನಿನ್ನನ್ನು ಕರೆಯುವುದಕ್ಕಿಂತ ಮುಂಚೆಯೇ ನೀನು ಅಂಜೂರದ ಮರದ ಕೆಳಗಿರುವುದನ್ನು ನಾನು ಕಂಡೆನು,” ಎಂದು ಉತ್ತರಿಸಿದರು.</verse>
				<verse number="49">ಅದಕ್ಕೆ ನತಾನಯೇಲನು, “ಗುರುವೇ, ನೀವು ದೇವಪುತ್ರ; ಇಸ್ರಾಯೇಲಿನ ಅರಸ ನೀವೇ,” ಎಂದನು.</verse>
				<verse number="50">ಯೇಸು ಅವನಿಗೆ, “ನಿನ್ನನ್ನು ಅಂಜೂರದ ಮರದ ಕೆಳಗೆ ಕಂಡಿದ್ದೆ ಎಂದು ನಾನು ಹೇಳಿದ್ದಕ್ಕೆ ನೀನು ನಂಬುತ್ತೀಯೋ? ನೀನು ಇವುಗಳಿಗಿಂತಲೂ ಮಹಾಕಾರ್ಯಗಳನ್ನು ಕಾಣುವೆ,” ಎಂದು ಉತ್ತರಿಸಿದರು.</verse>
				<verse number="51">ಯೇಸು ಅವನಿಗೆ, “ನಾನು ನಿಮಗೆ ನಿಜವಾಗಿ ಹೇಳುವುದೇನೆಂದರೆ, ನೀವು ಪರಲೋಕವು ತೆರೆದಿರುವುದನ್ನೂ ದೇವದೂತರು ಮನುಷ್ಯಪುತ್ರನಾದ ನನ್ನ ಮುಖಾಂತರ ಇಳಿಯುತ್ತಾ ಏರುತ್ತಾ ಇರುವುದನ್ನೂ ಕಾಣುವಿರಿ,” ಎಂದು ಹೇಳಿದರು.</verse>
			</chapter>
			<chapter number="2">
				<verse number="1">ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು.</verse>
				<verse number="2">ಯೇಸು ಮತ್ತು ಅವರ ಶಿಷ್ಯರು ಮದುವೆಗೆ ಆಮಂತ್ರಿತರಾಗಿದ್ದರು.</verse>
				<verse number="3">ಅಲ್ಲಿ ದ್ರಾಕ್ಷಾರಸವು ಮುಗಿದು ಹೋದಾಗ, ಯೇಸುವಿನ ತಾಯಿ, “ಅವರಲ್ಲಿ ದ್ರಾಕ್ಷಾರಸ ಮುಗಿದು ಹೋಗಿದೆ,” ಎಂದು ಯೇಸುವಿಗೆ ತಿಳಿಸಿದಳು.</verse>
				<verse number="4">ಯೇಸು ಆಕೆಗೆ, “ಅಮ್ಮಾ, ನಾನು ನಿಮಗೆ ಏನು ಮಾಡಲು ಬಯಸುತ್ತೀರಿ? ನನ್ನ ಸಮಯವು ಇನ್ನೂ ಬಂದಿಲ್ಲ,” ಎಂದು ಹೇಳಿದರು.</verse>
				<verse number="5">ಯೇಸುವಿನ ತಾಯಿಯು ಸೇವಕರಿಗೆ, “ಆತನು ನಿಮಗೆ ಹೇಳಿದಂತೆ ಮಾಡಿರಿ,” ಎಂದು ಹೇಳಿದಳು.</verse>
				<verse number="6">ಯೆಹೂದ್ಯರ ಶುದ್ಧಾಚಾರದ ಪ್ರಕಾರ ಅಲ್ಲಿ ಕಲ್ಲಿನ ಆರು ಬಾನೆಗಳು ಇದ್ದವು. ಪ್ರತಿಯೊಂದು ಬಾನೆಯೂ ಎರಡು ಇಲ್ಲವೆ ಮೂರು ಕೊಡದ ಅಳತೆಯುಳ್ಳದ್ದಾಗಿತ್ತು.</verse>
				<verse number="7">ಯೇಸು ಸೇವಕರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ,” ಎಂದರು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು.</verse>
				<verse number="8">ಅನಂತರ ಯೇಸು ಅವರಿಗೆ, “ಈಗ ಇದನ್ನು ತೆಗೆದುಕೊಂಡು ಔತಣದ ಮೇಲ್ವಿಚಾರಕನಿಗೆ ಕೊಡಿರಿ,” ಎಂದರು. ಸೇವಕರು ತೆಗೆದುಕೊಂಡು ಹೋದರು.</verse>
				<verse number="9">ಔತಣದ ಮೇಲ್ವಿಚಾರಕನು ದ್ರಾಕ್ಷಾರಸವಾಗಿದ್ದ ನೀರನ್ನು ರುಚಿನೋಡಿದಾಗ, ಅದು ಎಲ್ಲಿಂದ ಬಂತೆಂದು ಅವನಿಗೆ ತಿಳಿದಿರಲಿಲ್ಲ. ಆದರೆ ನೀರನ್ನು ತಂದ ಸೇವಕರಿಗೆ ತಿಳಿದಿತ್ತು. ಔತಣದ ಮೇಲ್ವಿಚಾರಕನು ಮದುಮಗನನ್ನು ಕರೆದು,</verse>
				<verse number="10">“ಪ್ರತಿಯೊಬ್ಬನು ಉತ್ತಮ ದ್ರಾಕ್ಷಾರಸವನ್ನು ಮೊದಲು ತಂದಿಟ್ಟು ಜನರು ತುಂಬಾ ಕುಡಿದ ಮೇಲೆ ಸಾಧಾರಣವಾದದ್ದನ್ನು ಕೊಡುತ್ತಾರೆ, ನೀನಾದರೋ ಉತ್ತಮ ದ್ರಾಕ್ಷಾರಸವನ್ನು ಇನ್ನೂ ಇಟ್ಟುಕೊಂಡಿರುವೆ,” ಎಂದನು.</verse>
				<verse number="11">ಯೇಸು ಗಲಿಲಾಯದ ಕಾನಾದಲ್ಲಿ ಮಾಡಿದ ಸೂಚಕಕಾರ್ಯಗಳಲ್ಲಿ ಇದು ಮೊದಲನೆಯದಾಗಿತ್ತು. ಹೀಗೆ ಯೇಸು ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಯೇಸುವಿನ ಶಿಷ್ಯರು ಅವರಲ್ಲಿ ನಂಬಿಕೆಯಿಟ್ಟರು.</verse>
				<verse number="12">ಇದಾದ ಮೇಲೆ ಯೇಸು ತಮ್ಮ ತಾಯಿ, ಸಹೋದರರು ಮತ್ತು ಶಿಷ್ಯರೊಡನೆ ಕಪೆರ್ನೌಮಿಗೆ ಹೋದರು. ಅಲ್ಲಿ ಅವರು ಕೆಲವು ದಿವಸ ಇದ್ದರು.</verse>
				<verse number="13">ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾದಾಗ ಯೇಸು ಯೆರೂಸಲೇಮಿಗೆ ಹೋದರು.</verse>
				<verse number="14">ಅವರು ದೇವಾಲಯದ ಅಂಗಳದಲ್ಲಿ ದನ, ಕುರಿ ಹಾಗೂ ಪಾರಿವಾಳಗಳನ್ನು ಮಾರುವವರೂ ಹಣ ಬದಲಾಯಿಸುವವರೂ ಕುಳಿತಿರುವುದನ್ನು ಕಂಡರು.</verse>
				<verse number="15">ಯೇಸು ಹಗ್ಗಗಳಿಂದ ಕೊರಡೆ ಮಾಡಿ ಕುರಿ, ದನ ಸಹಿತ ಎಲ್ಲರನ್ನೂ ದೇವಾಲಯದ ಹೊರಕ್ಕೆ ಅಟ್ಟಿ, ಹಣ ಬದಲಾಯಿಸುವವರ ನಾಣ್ಯಗಳನ್ನು ಮತ್ತು ಮೇಜುಗಳನ್ನು ಕೆಡವಿದರು.</verse>
				<verse number="16">ಯೇಸು ಪಾರಿವಾಳ ಮಾರುವವರಿಗೆ, “ಇವುಗಳನ್ನು ತೆಗೆದುಕೊಂಡು ಹೋಗಿರಿ, ನನ್ನ ತಂದೆಯ ಮನೆಯನ್ನು ವ್ಯಾಪಾರದ ಮನೆಯನ್ನಾಗಿ ಮಾಡಬೇಡಿರಿ,” ಎಂದರು.</verse>
				<verse number="17">ಯೇಸುವಿನ ಶಿಷ್ಯರು, “ನಿನ್ನ ಆಲಯದ ಮೇಲಿನ ಆಸಕ್ತಿಯು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,” ಎಂದು ಪವಿತ್ರ ವೇದದಲ್ಲಿ ಬರೆದಿರುವುದನ್ನು ಜ್ಞಾಪಕಮಾಡಿಕೊಂಡರು.</verse>
				<verse number="18">ಆಗ ಯೆಹೂದ್ಯರು ಯೇಸುವಿಗೆ, “ಇವುಗಳನ್ನು ಮಾಡುವ ಅಧಿಕಾರ ನಿನಗಿದೆ ಎಂಬುದಕ್ಕೆ ಯಾವ ಸೂಚಕಕಾರ್ಯವನ್ನು ತೋರಿಸುತ್ತೀ?” ಎಂದು ಕೇಳಿದರು.</verse>
				<verse number="19">ಅದಕ್ಕೆ ಯೇಸು ಅವರಿಗೆ, “ಈ ದೇವಾಲಯವನ್ನು ಕೆಡವಿರಿ. ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು,” ಎಂದು ಉತ್ತರಕೊಟ್ಟರು.</verse>
				<verse number="20">ಅದಕ್ಕೆ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟುವುದಕ್ಕೆ ನಲವತ್ತಾರು ವರ್ಷಗಳಾದವು. ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆಯೋ?” ಎಂದರು.</verse>
				<verse number="21">ಆದರೆ ಯೇಸು ತಮ್ಮ ದೇಹವೆಂಬ ಆಲಯವನ್ನು ಕುರಿತು ಹೇಳಿದ್ದರು.</verse>
				<verse number="22">ಆದ್ದರಿಂದ ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದಾಗ, ಅವರ ಶಿಷ್ಯರು ಅವರು ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಪವಿತ್ರ ವೇದವನ್ನೂ ಯೇಸು ತಮಗೆ ಹೇಳಿದ ಮಾತನ್ನೂ ನಂಬಿದರು.</verse>
				<verse number="23">ಯೇಸು ಪಸ್ಕಹಬ್ಬದಂದು ಯೆರೂಸಲೇಮಿನಲ್ಲಿದ್ದಾಗ ಮಾಡಿದ ಸೂಚಕಕಾರ್ಯಗಳನ್ನು ಅನೇಕರು ಕಂಡು ಅವರ ಹೆಸರಿನಲ್ಲಿ ನಂಬಿಕೆ ಇಟ್ಟರು.</verse>
				<verse number="24">ಆದರೆ ಯೇಸು ಎಲ್ಲರನ್ನೂ ಅರಿತವರಾದ್ದರಿಂದ ತಮ್ಮನ್ನು ಒಪ್ಪಿಸಿಕೊಡಲಿಲ್ಲ.</verse>
				<verse number="25">ಯೇಸು ಮನುಷ್ಯರ ಅಂತರಂಗವನ್ನು ತಿಳಿದವರಾದ ಕಾರಣ ಯಾರೂ ಯಾವ ಮನುಷ್ಯನ ವಿಷಯದಲ್ಲಿಯೂ ಅವರಿಗೆ ಸಾಕ್ಷಿ ಕೊಡಬೇಕಾದ ಅವಶ್ಯವಿರಲಿಲ್ಲ.</verse>
			</chapter>
			<chapter number="3">
				<verse number="1">ಯೆಹೂದ್ಯರ ಆಡಳಿತ ಮಂಡಳಿಯ ಸದಸ್ಯನೂ ಫರಿಸಾಯನೂ ಆದ ನಿಕೊದೇಮನೆಂಬ ಮನುಷ್ಯನಿದ್ದನು.</verse>
				<verse number="2">ಇವನು ಒಂದು ರಾತ್ರಿ ಯೇಸುವಿನ ಬಳಿಗೆ ಬಂದು, “ಗುರುವೇ, ನೀವು ದೇವರ ಬಳಿಯಿಂದ ಬಂದ ಬೋಧಕರೆಂದು ನಾವು ಬಲ್ಲೆವು. ಏಕೆಂದರೆ ದೇವರು ಒಬ್ಬನ ಸಂಗಡ ಇಲ್ಲದಿದ್ದರೆ ನೀವು ಮಾಡುವ ಸೂಚಕಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು,” ಎಂದನು.</verse>
				<verse number="3">ಯೇಸು ಅವನಿಗೆ, “ಒಬ್ಬನು ಮತ್ತೊಮ್ಮೆ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.”</verse>
				<verse number="4">ನಿಕೊದೇಮನು ಯೇಸುವಿಗೆ, “ಒಬ್ಬನು ವಯಸ್ಸಾದ ಮೇಲೆ ಮತ್ತೆ ಹುಟ್ಟುವುದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವುದಾದೀತೇ?” ಎಂದು ಕೇಳಿದನು.</verse>
				<verse number="5">ಯೇಸು ಅವನಿಗೆ, “ಯಾರು ನೀರಿನಿಂದಲೂ ಆತ್ಮದಿಂದಲೂ ಹುಟ್ಟುವದಿಲ್ಲವೋ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು, ಎಂದು ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ.</verse>
				<verse number="6">ಮಾಂಸದಿಂದ ಹುಟ್ಟಿದ್ದು ಮಾಂಸವೇ, ದೇವರಾತ್ಮದಿಂದ ಹುಟ್ಟಿದವರು ಆತ್ಮವೇ.</verse>
				<verse number="7">‘ನೀವು ಮತ್ತೆ ಹುಟ್ಟಬೇಕಾಗಿದೆ,’ ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ.</verse>
				<verse number="8">ಗಾಳಿಯು ಅದರ ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಅದರಂತೆಯೇ ಆತ್ಮದಿಂದ ಹುಟ್ಟಿದ ಪ್ರತಿಯೊಬ್ಬರೂ ಹೀಗೇ ಇದ್ದಾರೆ,” ಎಂದು ಉತ್ತರಕೊಟ್ಟರು.</verse>
				<verse number="9">ನಿಕೊದೇಮನು ಯೇಸುವಿಗೆ, “ಇದೆಲ್ಲಾ ಹೇಗೆ ಸಾಧ್ಯ?” ಎಂದು ಕೇಳಿದನು.</verse>
				<verse number="10">ಯೇಸು ಅವನಿಗೆ, “ಇಸ್ರಾಯೇಲರಿಗೆ ಬೋಧಕನಾಗಿರುವ ನಿನಗೆ ಇವುಗಳು ತಿಳಿಯುವುದಿಲ್ಲವೋ?</verse>
				<verse number="11">ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನಾವು ತಿಳಿದಿರುವುದನ್ನು ಮಾತನಾಡುತ್ತೇವೆ ಮತ್ತು ಕಂಡಿದ್ದಕ್ಕೆ ಸಾಕ್ಷಿ ನೀಡುತ್ತೇವೆ. ನೀವಾದರೋ ನಮ್ಮ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ.</verse>
				<verse number="12">ನಾನು ಭೂಲೋಕದ ಕಾರ್ಯಗಳನ್ನು ನಿಮಗೆ ಹೇಳುವಾಗಲೇ ನೀವು ನಂಬುವುದಿಲ್ಲ, ಪರಲೋಕದ ಕಾರ್ಯಗಳನ್ನು ಕುರಿತು ನಿಮಗೆ ಹೇಳಿದರೆ ಹೇಗೆ ನಂಬುವಿರಿ?</verse>
				<verse number="13">ಪರಲೋಕದಿಂದ ಇಳಿದು ಬಂದ ಮನುಷ್ಯಪುತ್ರನಾದ ನನ್ನನ್ನು ಹೊರತು ಯಾರೂ ಪರಲೋಕಕ್ಕೆ ಏರಿ ಹೋದವರಿಲ್ಲ.</verse>
				<verse number="14">ಇದಲ್ಲದೆ ಮೋಶೆಯು ಅರಣ್ಯದಲ್ಲಿ ಸರ್ಪವನ್ನು ಮೇಲೆ ಎತ್ತಿದ ಹಾಗೆಯೇ ಮನುಷ್ಯಪುತ್ರನಾದ ನನ್ನನ್ನು ಸಹ ಮೇಲಕ್ಕೆ ಏರಿಸಬೇಕು.</verse>
				<verse number="15">ಹೀಗೆ ಮನುಷ್ಯಪುತ್ರನಾದ ನನ್ನನ್ನು ನಂಬುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವರು.”</verse>
				<verse number="16">ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕೊಟ್ಟರು. ಅದಕ್ಕಾಗಿಯೇ ಅವರನ್ನು ನಂಬುವ ಪ್ರತಿಯೊಬ್ಬರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕು.</verse>
				<verse number="17">ದೇವರು ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ತಮ್ಮ ಪುತ್ರನ ಮುಖಾಂತರ ಲೋಕದ ಜನರನ್ನು ರಕ್ಷಿಸುವುದಕ್ಕಾಗಿಯೇ ಅವರನ್ನು ಲೋಕಕ್ಕೆ ಕಳುಹಿಸಿದರು.</verse>
				<verse number="18">ಮಗನನ್ನು ನಂಬುವವನಿಗೆ ತೀರ್ಪು ಆಗುವುದಿಲ್ಲ. ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ ಅವನು ದೇವರ ಒಬ್ಬನೇ ಪುತ್ರನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.</verse>
				<verse number="19">ಆ ತೀರ್ಪು ಏನೆಂದರೆ: ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು.</verse>
				<verse number="20">ಕೇಡನ್ನು ಮಾಡುವವರು ಬೆಳಕನ್ನು ದ್ವೇಷಿಸುತ್ತಾರೆ ಮತ್ತು ಬೆಳಕಿಗೆ ಬರುವುದಿಲ್ಲ. ಏಕೆಂದರೆ ಅವರು ಮಾಡಿರುವ ಕೆಟ್ಟ ಕಾರ್ಯಗಳನ್ನೆಲ್ಲಾ ಬೆಳಕು ತೋರಿಸುತ್ತದೆ.</verse>
				<verse number="21">ಆದರೆ ಸತ್ಯವನ್ನು ಅನುಸರಿಸುವವರು ನಡೆದಿರುವ ತಮ್ಮ ಕೃತ್ಯಗಳು ದೇವರಿಂದ ಆದವುಗಳೆಂದು ಪ್ರಕಟಿಸುವಂತೆ ಬೆಳಕಿಗೆ ಬರುತ್ತಾರೆ.</verse>
				<verse number="22">ಇವುಗಳಾದ ಮೇಲೆ ಯೇಸುವೂ ಅವರ ಶಿಷ್ಯರೂ ಯೂದಾಯ ಪ್ರಾಂತಕ್ಕೆ ಬಂದರು. ಅಲ್ಲಿ ಯೇಸು ಅವರೊಂದಿಗೆ ಇದ್ದು ದೀಕ್ಷಾಸ್ನಾನ ಮಾಡಿಸುತ್ತಿದ್ದರು.</verse>
				<verse number="23">ಇದಲ್ಲದೆ ಯೋಹಾನನು ಸಹ ಸಲೀಮ್ ಎಂಬ ಊರಿನ ಸಮೀಪದಲ್ಲಿದ್ದ ಐನೋನ್ ಎಂಬ ಸ್ಥಳದಲ್ಲಿ ದೀಕ್ಷಾಸ್ನಾನ ಮಾಡಿಸುತ್ತಿದ್ದನು. ಏಕೆಂದರೆ ಅಲ್ಲಿ ಬಹಳ ನೀರು ಇತ್ತು. ಜನರು ಬಂದು ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.</verse>
				<verse number="24">ಆಗ ಯೋಹಾನನು ಇನ್ನೂ ಸೆರೆಯಲ್ಲಿ ಬಂಧಿತನಾಗಿರಲಿಲ್ಲ.</verse>
				<verse number="25">ಯೋಹಾನನ ಶಿಷ್ಯರಿಗೂ ಒಬ್ಬ ಯೆಹೂದ್ಯನಿಗೂ ಶುದ್ಧಾಚಾರವನ್ನು ಕುರಿತು ವಿವಾದ ಉಂಟಾಯಿತು.</verse>
				<verse number="26">ಅವರು ಯೋಹಾನನ ಬಳಿಗೆ ಬಂದು ಅವನಿಗೆ, “ಗುರುವೇ, ಯೊರ್ದನ್ ನದಿಯ ಆಚೆದಡದಲ್ಲಿ ನಿನ್ನೊಡನೆ ಇದ್ದ ಒಬ್ಬರ ಬಗ್ಗೆ ನೀನು ಸಾಕ್ಷಿ ಕೊಟ್ಟೆಯಲ್ಲಾ. ಇಗೋ, ಅವರು ದೀಕ್ಷಾಸ್ನಾನ ಮಾಡಿಸುತ್ತಿದ್ದಾರೆ ಮತ್ತು ಎಲ್ಲರೂ ಅವರ ಬಳಿಗೆ ಹೋಗುತ್ತಿದ್ದಾರೆ,” ಎಂದರು.</verse>
				<verse number="27">ಅದಕ್ಕೆ ಯೋಹಾನನು, “ಪರಲೋಕದಿಂದ ಒಬ್ಬ ಮನುಷ್ಯನಿಗೆ ದಯಪಾಲಿಸದ ಹೊರತು ಅವನು ಯಾವುದನ್ನೂ ಹೊಂದಲಾರನು.</verse>
				<verse number="28">‘ನಾನು ಕ್ರಿಸ್ತನಲ್ಲ, ಆದರೆ ಅವರ ಮುಂದೂತನೆಂದು,’ ಹೇಳಿದ್ದಕ್ಕೆ ನೀವೇ ಸಾಕ್ಷಿ.</verse>
				<verse number="29">ಮದುಮಗಳು ಮದುಮಗನಿಗೆ ಸೇರಿದವಳು. ಆದರೂ ಮದುಮಗನ ಸ್ನೇಹಿತನು ನಿಂತುಕೊಂಡು ಆತನ ಮಾತಿಗೆ ಕಿವಿಗೊಟ್ಟು, ಮದುಮಗನ ಸ್ವರ ಕೇಳಿ ಸಂತೋಷಪಡುತ್ತಾನೆ. ಆದಕಾರಣ ಈ ನನ್ನ ಸಂತೋಷವು ಪರಿಪೂರ್ಣವಾಯಿತು.</verse>
				<verse number="30">ಆತನು ಹೆಚ್ಚಾಗಬೇಕು ನಾನು ಕಡಿಮೆಯಾಗಬೇಕು.</verse>
				<verse number="31">“ಮೇಲಿನಿಂದ ಬರುವವರೇ ಎಲ್ಲರಿಗಿಂತಲೂ ಮೇಲಾದವರು, ಭೂಲೋಕದವನಾದರೋ ಭೂಮಿಗೆ ಸೇರಿದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವವರು ಎಲ್ಲವುಗಳಿಗಿಂತಲೂ ಮೇಲಾದವರು.</verse>
				<verse number="32">ಅವರು ಯಾವುದನ್ನು ಕಂಡು ಕೇಳಿದರೋ ಅದಕ್ಕೆ ಸಾಕ್ಷಿಕೊಡುತ್ತಾರೆ. ಆದರೆ ಅವರ ಸಾಕ್ಷಿಯನ್ನು ಯಾರೂ ಸ್ವೀಕರಿಸುವುದಿಲ್ಲ.</verse>
				<verse number="33">ಅವರ ಸಾಕ್ಷಿಯನ್ನು ಸ್ವೀಕರಿಸಿದವರು ದೇವರು ಸತ್ಯವಂತರೆಂದು ಮುದ್ರೆ ಹಾಕಿದ್ದಾರೆ.</verse>
				<verse number="34">ದೇವರು ಕಳುಹಿಸಿದವರಾದರೋ ದೇವರ ಮಾತುಗಳನ್ನೇ ಆಡುತ್ತಾರೆ. ಏಕೆಂದರೆ ದೇವರು ಅವರಿಗೆ ಆತ್ಮವನ್ನು ಮಿತಿಯಿಲ್ಲದೆ ಕೊಟ್ಟಿದ್ದಾರೆ.</verse>
				<verse number="35">ತಂದೆಯು ಪುತ್ರನನ್ನು ಪ್ರೀತಿಸಿ ಎಲ್ಲವನ್ನೂ ಅವರ ಕೈಯಲ್ಲಿ ಕೊಟ್ಟಿದ್ದಾರೆ.</verse>
				<verse number="36">ಯಾರು ದೇವಪುತ್ರ ಆಗಿರುವವರನ್ನು ನಂಬುವರೋ ಅವರು ನಿತ್ಯಜೀವ ಪಡೆದಿರುತ್ತಾರೆ. ದೇವಪುತ್ರ ಆಗಿರುವವರನ್ನು ನಂಬದವರು ನಿತ್ಯಜೀವವನ್ನು ಕಾಣುವುದಿಲ್ಲ. ಆದರೆ ದೇವರ ಕೋಪಾಗ್ನಿಯು ಅವರ ಮೇಲೆ ನೆಲೆಗೊಂಡಿರುವುದು,” ಎಂದು ಹೇಳಿದನು.</verse>
			</chapter>
			<chapter number="4">
				<verse number="1">ಫರಿಸಾಯರಲ್ಲಿ ಯೋಹಾನನಿಗಿಂತಲೂ ಯೇಸು ಹೆಚ್ಚಿನ ಶಿಷ್ಯರನ್ನು ಹೊಂದಿದ್ದಾರೆ ಮತ್ತು ದೀಕ್ಷಾಸ್ನಾನ ಮಾಡಿಸುತ್ತಾರೆ ಎಂಬುವುದನ್ನು ಫರಿಸಾಯರು ಕೇಳಿಸಿಕೊಂಡರು.</verse>
				<verse number="2">ಆದರೆ ಯೇಸು ತಾವೇ ದೀಕ್ಷಾಸ್ನಾನ ಮಾಡಿಸುತ್ತಿರಲಿಲ್ಲ. ಅವರ ಶಿಷ್ಯರು ಮಾಡಿಸುತ್ತಿದ್ದರು.</verse>
				<verse number="3">ಫರಿಸಾಯರು ಕೇಳಿಸಿಕೊಂಡದ್ದನ್ನು ಯೇಸು ತಿಳಿದಾಗ, ಯೇಸು ಯೂದಾಯವನ್ನು ಬಿಟ್ಟು ಗಲಿಲಾಯಕ್ಕೆ ತಿರುಗಿ ಹೊರಟು ಹೋದರು.</verse>
				<verse number="4">ಯೇಸು ಸಮಾರ್ಯದ ಮಾರ್ಗವಾಗಿ ಹೋಗಬೇಕಾಗಿತ್ತು.</verse>
				<verse number="5">ಯಾಕೋಬನು ತನ್ನ ಮಗನಾದ ಯೋಸೇಫನಿಗೆ ಕೊಟ್ಟ ಭೂಮಿಯ ಸಮೀಪದಲ್ಲಿರುವ ಸುಖರೆಂಬ ಸಮಾರ್ಯದ ಪಟ್ಟಣಕ್ಕೆ ಯೇಸು ಬಂದರು.</verse>
				<verse number="6">ಅಲ್ಲಿ ಯಾಕೋಬನ ಬಾವಿ ಇತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡವರಾಗಿ ಆ ಬಾವಿಯ ಬಳಿಯಲ್ಲಿ ಕುಳಿತುಕೊಂಡರು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.</verse>
				<verse number="7">ಆಗ ಸಮಾರ್ಯದವಳಾದ ಒಬ್ಬ ಸ್ತ್ರೀಯು ನೀರು ಸೇದುವುದಕ್ಕಾಗಿ ಬಂದಳು. ಯೇಸು ಆಕೆಗೆ, “ನನಗೆ ಕುಡಿಯುವುದಕ್ಕೆ ನೀರು ಕೊಡು,” ಎಂದರು.</verse>
				<verse number="8">ಯೇಸುವಿನ ಶಿಷ್ಯರು ಆಹಾರವನ್ನು ಕೊಂಡುಕೊಳ್ಳಲು ಪಟ್ಟಣದೊಳಕ್ಕೆ ಹೋಗಿದ್ದರು.</verse>
				<verse number="9">ಆದ್ದರಿಂದ ಆ ಸಮಾರ್ಯ ಸ್ತ್ರೀಯು ಯೇಸುವಿಗೆ, “ನೀನು ಯೆಹೂದ್ಯನಾಗಿದ್ದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕುಡಿಯುವುದಕ್ಕೆ ನೀರು ಕೊಡು ಎಂದು ಕೇಳುವುದು ಹೇಗೆ,” ಎಂದಳು. ಏಕೆಂದರೆ ಯೆಹೂದ್ಯರಿಗೂ ಸಮಾರ್ಯದವರಿಗೂ ಒಡನಾಟ ಇರಲಿಲ್ಲ.</verse>
				<verse number="10">ಯೇಸು ಆಕೆಗೆ, “ದೇವರ ವರವನ್ನೂ, ‘ಕುಡಿಯುವುದಕ್ಕೆ ನೀರು ಕೊಡು,’ ಎಂದು ಕೇಳುವ ನಾನು ಯಾರೆಂಬುದನ್ನೂ ನೀನು ತಿಳಿದಿದ್ದರೆ ನೀನೇ ನನ್ನಿಂದ ನೀರನ್ನು ಕೇಳುತ್ತಿದ್ದೆ. ನಾನು ನಿನಗೆ ಜೀವಜಲವನ್ನು ಕೊಡುತ್ತಿದ್ದೆನು,” ಎಂದು ಹೇಳಿದರು.</verse>
				<verse number="11">ಅದಕ್ಕೆ ಆ ಸ್ತ್ರೀಯು, “ಅಯ್ಯಾ, ನೀರು ಸೇದುವುದಕ್ಕೆ ನಿಮ್ಮ ಹತ್ತಿರ ಏನೂ ಇಲ್ಲವಲ್ಲಾ, ಬಾವಿಯೋ ಆಳವಾಗಿದೆ. ಹೀಗಿರುವಲ್ಲಿ ಜೀವಜಲವು ನಿನಗೆ ಎಲ್ಲಿಂದ ಬಂದೀತು?</verse>
				<verse number="12">ಯಾಕೋಬನ ಮಕ್ಕಳು ಮತ್ತು ಪಶುಗಳು ಈ ಬಾವಿಯ ನೀರನ್ನು ಕುಡಿದರು. ಅದನ್ನು ನಮಗೆ ಕೊಟ್ಟ ನಮ್ಮ ತಂದೆ ಯಾಕೋಬನಿಗಿಂತ ನೀನು ದೊಡ್ಡವನೋ?” ಎಂದಳು.</verse>
				<verse number="13">ಯೇಸು ಆಕೆಗೆ, “ಈ ನೀರನ್ನು ಕುಡಿಯುವ ಪ್ರತಿಯೊಬ್ಬರಿಗೆ ಪುನಃ ದಾಹವಾಗುವುದು.</verse>
				<verse number="14">ಆದರೆ ನಾನು ಕೊಡುವ ನೀರನ್ನು ಕುಡಿಯುವವರಿಗೆ ಎಂದೆಂದಿಗೂ ದಾಹವಾಗದು. ನಾನು ಅವರಿಗೆ ಕೊಡುವ ನೀರು ಅವರಲ್ಲಿ ನಿತ್ಯಜೀವಕ್ಕೆ ಉಕ್ಕುವ ನೀರಿನ ಬುಗ್ಗೆಯಾಗಿರುವುದು,” ಎಂದರು.</verse>
				<verse number="15">ಅದಕ್ಕೆ ಆ ಸ್ತ್ರೀಯು, “ಅಯ್ಯಾ, ಆ ನೀರನ್ನೇ ನನಗೆ ಕೊಡು. ಆಗ ನನಗೆ ದಾಹವಾಗುವುದಿಲ್ಲ. ಇನ್ನು ಮುಂದೆ ನಾನು ನೀರು ಸೇದುವುದಕ್ಕೆ ಇಲ್ಲಿಗೆ ಬರುವ ಅವಶ್ಯವಿರುವುದಿಲ್ಲ,” ಎಂದಳು.</verse>
				<verse number="16">ಯೇಸು ಆಕೆಗೆ, “ಹೋಗಿ ನಿನ್ನ ಗಂಡನನ್ನು ಕರೆದುಕೊಂಡು ಬಾ,” ಎಂದರು.</verse>
				<verse number="17">ಅದಕ್ಕೆ ಆ ಸ್ತ್ರೀಯು, “ನನಗೆ ಗಂಡನಿಲ್ಲ,” ಎಂದಳು. ಯೇಸು ಆಕೆಗೆ, “ನನಗೆ ಗಂಡನಿಲ್ಲ, ಎಂದು ನೀನು ಹೇಳಿದ್ದು ಸರಿಯೇ.</verse>
				<verse number="18">ನಿನಗೆ ಐದು ಮಂದಿ ಗಂಡಂದಿರು ಇದ್ದರು. ಈಗ ನಿನಗಿರುವವನು ನಿನ್ನ ಗಂಡನಲ್ಲ, ನೀನು ಹೇಳಿದ್ದು ಸರಿಯೇ,” ಎಂದರು.</verse>
				<verse number="19">ಆಗ ಆ ಸ್ತ್ರೀಯು ಯೇಸುವಿಗೆ, “ಅಯ್ಯಾ, ನೀವು ಒಬ್ಬ ಪ್ರವಾದಿಯೆಂದು ನನಗೆ ಕಾಣುತ್ತದೆ.</verse>
				<verse number="20">ನಮ್ಮ ಪಿತೃಗಳು ಈ ಬೆಟ್ಟದ ಮೇಲೆ ದೇವರನ್ನು ಆರಾಧಿಸಿದರು. ಆದರೆ, ‘ಆರಾಧಿಸತಕ್ಕ ಸ್ಥಳವು ಯೆರೂಸಲೇಮಿನಲ್ಲಿಯೇ’ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ,” ಎಂದಳು.</verse>
				<verse number="21">ಯೇಸು ಆಕೆಗೆ, “ಅಮ್ಮಾ, ನನ್ನನ್ನು ನಂಬು, ಈ ಬೆಟ್ಟದಲ್ಲಿಯಾಗಲಿ ಯೆರೂಸಲೇಮಿನಲ್ಲಾಗಲಿ ನೀವು ತಂದೆಯನ್ನು ಆರಾಧಿಸದೆ ಇರುವ ಕಾಲ ಬರುತ್ತದೆ.</verse>
				<verse number="22">ನೀವು ಸಮಾರ್ಯದವರು ಅರಿಯದೆ ಇರುವುದನ್ನು ಆರಾಧಿಸುತ್ತೀರಿ. ನಾವು ಅರಿತಿರುವುದನ್ನೇ ಆರಾಧಿಸುವವರು. ಏಕೆಂದರೆ ರಕ್ಷಣೆಯು ಯೆಹೂದ್ಯರಿಂದಲೇ.</verse>
				<verse number="23">ಆದರೆ ನಿಜವಾದ ಆರಾಧಕರು ತಂದೆಯನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವ ಕಾಲ ಬರುತ್ತದೆ; ಅದು ಈಗಲೇ ಬಂದಿದೆ. ಏಕೆಂದರೆ ತಂದೆಯು ನಿಜವಾಗಿಯೂ ಈ ರೀತಿ ಆರಾಧಿಸುವವರನ್ನೇ ಹುಡುಕುತ್ತಾರೆ.</verse>
				<verse number="24">ದೇವರು ಆತ್ಮರಾಗಿದ್ದಾರೆ. ಅವರನ್ನು ಆರಾಧಿಸುವವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸಬೇಕು,” ಎಂದರು.</verse>
				<verse number="25">ಆ ಸ್ತ್ರೀಯು ಯೇಸುವಿಗೆ, “ಕ್ರಿಸ್ತ ಎಂದು ಕರೆಯಲಾಗುವ ಮೆಸ್ಸೀಯ ಬರುತ್ತಾರೆಂದು ನಾನು ಬಲ್ಲೆನು. ಅವರು ಬಂದಾಗ ನಮಗೆ ಎಲ್ಲವನ್ನೂ ತಿಳಿಸುವರು,” ಎಂದಳು.</verse>
				<verse number="26">ಯೇಸು ಆಕೆಗೆ, “ನಿನ್ನೊಂದಿಗೆ ಮಾತನಾಡುವ ನಾನೇ ಆತನು!” ಎಂದರು.</verse>
				<verse number="27">ಅಷ್ಟರೊಳಗೆ ಅವರ ಶಿಷ್ಯರು ಬಂದು ಯೇಸು ಆ ಸ್ತ್ರೀಯೊಂದಿಗೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೂ, “ನಿಮಗೆ ಏನು ಬೇಕು? ಆಕೆಯೊಂದಿಗೆ ಏಕೆ ಮಾತನಾಡುತ್ತಿರುವಿರಿ?” ಎಂದು ಒಬ್ಬನಾದರೂ ಕೇಳಲಿಲ್ಲ.</verse>
				<verse number="28">ಆ ಸ್ತ್ರೀಯು ತನ್ನ ನೀರಿನ ಕೊಡವನ್ನು ಅಲ್ಲಿಯೇ ಬಿಟ್ಟು ಪಟ್ಟಣದೊಳಕ್ಕೆ ಹೊರಟುಹೋಗಿ ಜನರಿಗೆ,</verse>
				<verse number="29">“ಬನ್ನಿರಿ, ನಾನು ಮಾಡಿದವುಗಳನ್ನೆಲ್ಲಾ ನನಗೆ ತಿಳಿಸಿದ ವ್ಯಕ್ತಿಯನ್ನು ಕಾಣಿರಿ, ಬರತಕ್ಕ ಕ್ರಿಸ್ತ ಇವರೇ ಆಗಿರಬಹುದು?” ಎಂದಳು.</verse>
				<verse number="30">ಆಗ ಅವರು ಪಟ್ಟಣದಿಂದ ಯೇಸುವಿನ ಬಳಿಗೆ ಬಂದರು.</verse>
				<verse number="31">ಆ ಸಮಯದಲ್ಲಿ ಶಿಷ್ಯರು, “ಗುರುವೇ ಊಟಮಾಡಿರಿ,” ಎಂದು ಯೇಸುವನ್ನು ಕೇಳಿಕೊಂಡರು.</verse>
				<verse number="32">ಆದರೆ ಯೇಸು ಅವರಿಗೆ, “ನಿಮಗೆ ತಿಳಿಯದಿರುವ ಆಹಾರವು ನನ್ನಲ್ಲಿದೆ,” ಎಂದರು.</verse>
				<verse number="33">ಶಿಷ್ಯರು, “ಯಾರಾದರೂ ಅವರಿಗೆ ಏನಾದರೂ ತಿನ್ನುವುದಕ್ಕೆ ತಂದು ಕೊಟ್ಟರೋ?” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.</verse>
				<verse number="34">ಯೇಸು ಅವರಿಗೆ, “ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನು ಮಾಡಿ ಅವರ ಕೆಲಸವನ್ನು ಪೂರೈಸುವುದೇ ನನ್ನ ಆಹಾರ.</verse>
				<verse number="35">ನೀವು, ‘ಇನ್ನೂ ನಾಲ್ಕು ತಿಂಗಳುಗಳಾದ ಮೇಲೆ ಸುಗ್ಗಿಯು ಬರುತ್ತದೆ’ ಎಂದು ಹೇಳುವುದಿಲ್ಲವೇ? ಮತ್ತು ಇಗೋ, ನಿಮ್ಮ ಕಣ್ಣೆತ್ತಿ ಹೊಲಗಳನ್ನು ನೋಡಿರಿ. ಏಕೆಂದರೆ ಅವು ಈಗಾಗಲೇ ಸುಗ್ಗಿಗೆ ಸಿದ್ಧವಾಗಿವೆ.</verse>
				<verse number="36">ಕೊಯ್ಯುವವನು ಕೂಲಿಯನ್ನು ಪಡೆದು ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳುತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಿಸುವರು.</verse>
				<verse number="37">‘ಬಿತ್ತುವವನೊಬ್ಬನು, ಕೊಯ್ಯುವವನು ಬೇರೊಬ್ಬನು,’ ಎಂದು ಹೇಳುವ ಮಾತು ಇದರಲ್ಲಿ ಸತ್ಯವಾಗಿದೆ.</verse>
				<verse number="38">ನೀವು ಪ್ರಯಾಸ ಪಡದಂಥದ್ದನ್ನು ಕೊಯ್ಯುವುದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು. ಇತರರು ಪ್ರಯಾಸಪಟ್ಟರು. ನೀವು ಅವರ ಪ್ರಯಾಸದ ಫಲವನ್ನು ಪಡೆದಿದ್ದೀರಿ,” ಎಂದರು.</verse>
				<verse number="39">ಆಗ, “ನಾನು ಮಾಡಿದ್ದೆಲ್ಲವನ್ನು ಆತನು ನನಗೆ ತಿಳಿಸಿದನು” ಎಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿನಿಂದ ಆ ಪಟ್ಟಣದ ಅನೇಕ ಸಮಾರ್ಯದವರು ಯೇಸುವಿನಲ್ಲಿ ನಂಬಿಕೆ ಇಟ್ಟರು.</verse>
				<verse number="40">ಆ ಸಮಾರ್ಯದವರು ಯೇಸುವಿನ ಬಳಿಗೆ ಬಂದು ತಮ್ಮೊಂದಿಗೆ ಇರಬೇಕೆಂದು ಅವರನ್ನು ಬೇಡಿಕೊಂಡರು. ಹೀಗೆ ಯೇಸು ಎರಡು ದಿವಸ ಅಲ್ಲಿಯೇ ಉಳಿದರು.</verse>
				<verse number="41">ಇನ್ನೂ ಹೆಚ್ಚು ಜನರು ಯೇಸುವಿನ ವಾಕ್ಯದ ದೆಸೆಯಿಂದ ನಂಬಿದರು.</verse>
				<verse number="42">ಜನರು ಆ ಸ್ತ್ರೀಗೆ, “ನಾವು ಇನ್ನು ಮುಂದೆ ನಂಬುವುದು ನಿನ್ನ ಮಾತಿನಿಂದಲ್ಲ. ಏಕೆಂದರೆ ನಾವೇ ಸ್ವತಃ ಕೇಳಿದ್ದೇವೆ. ಈತನು ನಿಜವಾಗಿಯೂ ಲೋಕ ರಕ್ಷಕನೆಂದು ತಿಳಿದಿದ್ದೇವೆ,” ಎಂದರು.</verse>
				<verse number="43">ಎರಡು ದಿವಸಗಳಾದ ಮೇಲೆ ಯೇಸು ಅಲ್ಲಿಂದ ಹೊರಟು ಗಲಿಲಾಯಕ್ಕೆ ಹೋದರು.</verse>
				<verse number="44">ಪ್ರವಾದಿಗೆ ತನ್ನ ಸ್ವದೇಶದಲ್ಲಿ ಮರ್ಯಾದೆ ಇಲ್ಲವೆಂದು ಯೇಸು ತಾವೇ ಹೇಳಿದ್ದರು.</verse>
				<verse number="45">ಯೇಸು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಅವರನ್ನು ಸ್ವಾಗತಿಸಿದರು. ಪಸ್ಕಹಬ್ಬದ ಸಮಯದಲ್ಲಿ ಯೇಸು ಯೆರೂಸಲೇಮಿನಲ್ಲಿ ಮಾಡಿದವುಗಳನ್ನೆಲ್ಲಾ ಕಂಡಿದ್ದರು.</verse>
				<verse number="46">ಯೇಸು ತಾನು ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ ಗಲಿಲಾಯದ ಕಾನಾ ಊರಿಗೆ ತಿರುಗಿ ಬಂದರು. ಆಗ ಕಪೆರ್ನೌಮಿನಲ್ಲಿದ್ದ ಒಬ್ಬ ಅಧಿಕಾರಿಯ ಮಗನು ಅಸ್ವಸ್ಥನಾಗಿದ್ದನು.</verse>
				<verse number="47">ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದಿರುವುದನ್ನು ಅವನು ಕೇಳಿದಾಗ ಅವರ ಬಳಿಗೆ ಹೋಗಿ, ಯೇಸು ಬಂದು ತನ್ನ ಮಗನನ್ನು ಸ್ವಸ್ಥಪಡಿಸಬೇಕೆಂದು ಬೇಡಿಕೊಂಡನು. ಏಕೆಂದರೆ ಅವನ ಮಗನು ಸಾಯುವ ಸ್ಥಿತಿಯಲ್ಲಿದ್ದನು.</verse>
				<verse number="48">ಯೇಸು ಅವನಿಗೆ, “ನೀವು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕಾಣದ ಹೊರತು ನಂಬುವುದೇ ಇಲ್ಲ,” ಎಂದರು.</verse>
				<verse number="49">ಆಗ ಆ ಅಧಿಕಾರಿಯು ಯೇಸುವಿಗೆ, “ಅಯ್ಯಾ, ನನ್ನ ಮಗನು ಸಾಯುವ ಮೊದಲೇ ಬನ್ನಿರಿ,” ಎಂದನು.</verse>
				<verse number="50">ಯೇಸು ಅವನಿಗೆ, “ಹೋಗು, ನಿನ್ನ ಮಗನು ಬದುಕುವನು,” ಎಂದರು. ಆ ಮನುಷ್ಯನು ಯೇಸು ತನಗೆ ಹೇಳಿದ ಮಾತನ್ನು ನಂಬಿ ಹೊರಟುಹೋದನು.</verse>
				<verse number="51">ಹೀಗೆ ಅವನು ಇಳಿದು ಹೋಗುತ್ತಿರುವಾಗಲೇ ಸೇವಕರು ಅವನನ್ನು ಸಂಧಿಸಿ, ಅವನ ಮಗನು ಬದುಕಿರುವುದಾಗಿ ಅವನಿಗೆ ಹೇಳಿದರು.</verse>
				<verse number="52">ಅವನು, “ಯಾವ ಸಮಯದಲ್ಲಿ ಮಗನು ಚೇತರಿಸಿಕೊಂಡನು?” ಎಂದು ಅವರನ್ನು ವಿಚಾರಿಸಿದಾಗ ಅವರು, “ನಿನ್ನೆ ಮಧ್ಯಾಹ್ನ ಒಂದು ಗಂಟೆಗೆ ಜ್ವರವು ಬಿಟ್ಟಿತು,” ಎಂದು ಸೇವಕರು ಅವನಿಗೆ ಹೇಳಿದರು.</verse>
				<verse number="53">ಹೀಗೆ, “ನಿನ್ನ ಮಗನು ಬದುಕುವನು” ಎಂದು ಯೇಸು ತನಗೆ ಹೇಳಿದ ಸಮಯದಯಲ್ಲಿಯೇ ಅದು ಆಯಿತೆಂದು ತಂದೆಯು ತಿಳಿದುಕೊಂಡು, ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ನಂಬಿದರು.</verse>
				<verse number="54">ಇದು ಯೇಸು ಯೂದಾಯದಿಂದ ಗಲಿಲಾಯಕ್ಕೆ ಬಂದ ಮೇಲೆ ಮಾಡಿದ ಎರಡನೆಯ ಸೂಚಕಕಾರ್ಯ.</verse>
			</chapter>
			<chapter number="5">
				<verse number="1">ಇದಾದ ಮೇಲೆ ಯೆಹೂದ್ಯರ ಹಬ್ಬವೊಂದು ಬಂತು. ಆದ್ದರಿಂದ, ಯೇಸು ಯೆರೂಸಲೇಮಿಗೆ ಹೋದರು.</verse>
				<verse number="2">ಯೆರೂಸಲೇಮಿನಲ್ಲಿ “ಕುರಿಬಾಗಿಲು” ಎಂಬ ಸ್ಥಳದ ಬಳಿ ಒಂದು ಕೊಳವಿದೆ. ಇದನ್ನು ಹೀಬ್ರೂ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ. ಅದಕ್ಕೆ ಐದು ಮಂಟಪಗಳಿದ್ದವು.</verse>
				<verse number="3">ಅವುಗಳಲ್ಲಿ ಅಸ್ವಸ್ಥರೂ ಕುರುಡರೂ ಕುಂಟರೂ ಪಾರ್ಶ್ವವಾಯು ಪೀಡಿತರೂ ಆಗಿದ್ದವರ ದೊಡ್ಡ ಸಮೂಹವೇ ಬಿದ್ದುಕೊಂಡು, ನೀರು ಉಕ್ಕುವುದನ್ನೇ ಕಾದು ನೋಡುತ್ತಿದ್ದರು.</verse>
				<verse number="4">ಏಕೆಂದರೆ ಕೆಲವೊಮ್ಮೆ ದೇವದೂತನು ಇಳಿದುಬಂದು ನೀರನ್ನು ಕಲಕುತ್ತಿದ್ದನು. ನೀರು ಕಲಕಿದೊಡನೆ ಮೊದಲು ಯಾರು ನೀರಿನೊಳಗೆ ಹೆಜ್ಜೆಯಿಡುತ್ತಿದ್ದರೋ ಅವರಿಗೆ ಯಾವ ರೋಗವಿದ್ದರೂ ಅದು ಗುಣವಾಗುತ್ತಿತ್ತು.</verse>
				<verse number="5">ಆಗ ಮೂವತ್ತೆಂಟು ವರ್ಷದಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನು ಅಲ್ಲಿ ಇದ್ದನು.</verse>
				<verse number="6">ಅವನು ಬಿದ್ದುಕೊಂಡಿರುವುದನ್ನು ಯೇಸು ಕಂಡು ಅವನು ಈಗಾಗಲೇ ಬಹುಕಾಲದಿಂದ ಆ ಸ್ಥಿತಿಯಲ್ಲಿದ್ದಾನೆಂದು ತಿಳಿದು ಅವನಿಗೆ, “ನಿನಗೆ ಗುಣಹೊಂದಲು ಮನಸ್ಸಿದೆಯೋ?” ಎಂದು ಕೇಳಿದರು.</verse>
				<verse number="7">ಅದಕ್ಕೆ ಆ ರೋಗಿಯು ಯೇಸುವಿಗೆ, “ಸ್ವಾಮಿ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವುದಕ್ಕೆ ನನಗೆ ಯಾರೂ ಇಲ್ಲ. ಆದರೆ ನಾನು ಹೋಗುತ್ತಿರುವಾಗಲೇ ನನಗಿಂತ ಮುಂದಾಗಿ ಮತ್ತೊಬ್ಬನು ಹೋಗುತ್ತಾನೆ,” ಎಂದನು.</verse>
				<verse number="8">ಯೇಸು ಅವನಿಗೆ, “ಎದ್ದು ನಿನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆ,” ಎಂದರು.</verse>
				<verse number="9">ಕೂಡಲೇ ಆ ಮನುಷ್ಯನು ಸ್ವಸ್ಥನಾಗಿ ತನ್ನ ಹಾಸಿಗೆಯನ್ನು ತೆಗೆದುಕೊಂಡು ನಡೆದನು. ಆ ದಿನವು ಸಬ್ಬತ್ ದಿನವಾಗಿತ್ತು.</verse>
				<verse number="10">ಆದ್ದರಿಂದ ಯೆಹೂದ್ಯರು ಸ್ವಸ್ಥನಾದವನಿಗೆ, “ಇದು ಸಬ್ಬತ್ ದಿನ ನೀನು ಹಾಸಿಗೆಯನ್ನು ಹೊತ್ತುಕೊಂಡು ನಡೆಯುವುದಕ್ಕೆ ನಿಷೇಧವಿದೆ,” ಎಂದರು.</verse>
				<verse number="11">ಆದರೆ ಅವನು ಅವರಿಗೆ, “ನನ್ನನ್ನು ಸ್ವಸ್ಥಪಡಿಸಿದವರೇ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ನನಗೆ ಹೇಳಿದ್ದಾರೆ,” ಎಂದನು.</verse>
				<verse number="12">ಅದಕ್ಕೆ ಯೆಹೂದ್ಯರು ಅವನಿಗೆ, “ ‘ಅದನ್ನು ಎತ್ತಿಕೊಂಡು ನಡೆ,’ ಎಂದು ನಿನಗೆ ಹೇಳಿದ ಮನುಷ್ಯನು ಯಾರು?” ಎಂದು ಕೇಳಿದರು.</verse>
				<verse number="13">ಆದರೆ ಆ ವ್ಯಕ್ತಿ ಯಾರೆಂದು ಸ್ವಸ್ಥನಾದವನಿಗೆ ತಿಳಿದಿರಲಿಲ್ಲ. ಏಕೆಂದರೆ ಆ ಸ್ಥಳದಲ್ಲಿ ಜನಸಮೂಹವು ಇದ್ದುದರಿಂದ ಯೇಸು ಅಲ್ಲಿಂದ ಮರೆಯಾಗಿಬಿಟ್ಟಿದ್ದರು.</verse>
				<verse number="14">ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡು ಅವನಿಗೆ, “ಇಗೋ, ನೀನು ಸ್ವಸ್ಥನಾಗಿರುವೆ, ಹೆಚ್ಚಿನ ಕೇಡು ಬಾರದಂತೆ ಇನ್ನು ಮೇಲೆ ಪಾಪ ಮಾಡಬೇಡ,” ಎಂದರು.</verse>
				<verse number="15">ಆಗ ಅವನು ಹೊರಟುಹೋಗಿ ತನ್ನನ್ನು ಸ್ವಸ್ಥಪಡಿಸಿದವರು ಯೇಸುವೇ ಎಂದು ಯೆಹೂದ್ಯರಿಗೆ ತಿಳಿಸಿದನು.</verse>
				<verse number="16">ಯೇಸು ಇವುಗಳನ್ನು ಸಬ್ಬತ್ ದಿನದಲ್ಲಿ ಮಾಡಿದ ಕಾರಣ ಯೆಹೂದ್ಯರು ಯೇಸುವನ್ನು ಹಿಂಸಿಸತೊಡಗಿದರು.</verse>
				<verse number="17">ಯೇಸು ಅವರಿಗೆ, “ನನ್ನ ತಂದೆ ಯಾವಾಗಲೂ ಕೆಲಸ ಮಾಡುತ್ತಾರೆ. ನಾನೂ ಕೆಲಸ ಮಾಡುತ್ತೇನೆ,” ಎಂದರು.</verse>
				<verse number="18">ಯೇಸು ಸಬ್ಬತ್ ದಿನವನ್ನು ಮುರಿದದ್ದು ಅಲ್ಲದೆ ದೇವರನ್ನು ತಮ್ಮ ಸ್ವಂತ ತಂದೆ ಎಂದು ಹೇಳಿ ತಮ್ಮನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಇನ್ನಷ್ಟು ಪ್ರಯತ್ನಮಾಡಿದರು.</verse>
				<verse number="19">ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವುದನ್ನು ಕಂಡು ಪುತ್ರನು ಮಾಡುತ್ತಾನೆ ಹೊರತು ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು. ಏಕೆಂದರೆ ತಂದೆ ಯಾವುದನ್ನೆಲ್ಲಾ ಮಾಡುವರೋ ಹಾಗೆಯೇ ಪುತ್ರನೂ ಮಾಡುವನು.</verse>
				<verse number="20">ತಂದೆ ಪುತ್ರನನ್ನು ಪ್ರೀತಿಸಿ ತಾನು ಮಾಡುವುದನ್ನೆಲ್ಲಾ ಪುತ್ರನಿಗೆ ತೋರಿಸುತ್ತಾರೆ. ನೀವು ಆಶ್ಚರ್ಯಪಡುವಂತೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಪುತ್ರನಿಗೆ ತೋರಿಸುವರು.</verse>
				<verse number="21">ತಂದೆ ಸತ್ತವರನ್ನು ಎಬ್ಬಿಸಿ ಬದುಕಿಸುವಂತೆಯೇ ಪುತ್ರನೂ ತನಗಿಷ್ಟ ಬಂದವರನ್ನು ಬದುಕಿಸುತ್ತಾರೆ.</verse>
				<verse number="22">ತಂದೆ ಯಾರಿಗೂ ತೀರ್ಪು ಮಾಡುವುದಿಲ್ಲ. ಆದರೆ ತೀರ್ಪು ಮಾಡುವುದನ್ನೆಲ್ಲಾ ಪುತ್ರನಿಗೆ ಒಪ್ಪಿಸಿದ್ದಾರೆ.</verse>
				<verse number="23">ಎಲ್ಲರೂ ತಂದೆಯನ್ನು ಸನ್ಮಾನಿಸುವಂತೆಯೇ ಪುತ್ರನನ್ನೂ ಸನ್ಮಾನಿಸಬೇಕು. ಪುತ್ರನನ್ನು ಸನ್ಮಾನಿಸದವನು ಆತನನ್ನು ಕಳುಹಿಸಿದ ತಂದೆಯನ್ನೂ ಸನ್ಮಾನಿಸುವುದಿಲ್ಲ.</verse>
				<verse number="24">“ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನ ವಾಕ್ಯವನ್ನು ಕೇಳಿ ನನ್ನನ್ನು ಕಳುಹಿಸಿದ ತಂದೆಯನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ. ಅವರು ನ್ಯಾಯತೀರ್ಪಿಗೆ ಗುರಿಯಾಗುವುದಿಲ್ಲ, ಮರಣದಿಂದ ಪಾರಾಗಿ ಜೀವವನ್ನು ಹೊಂದಿದ್ದಾರೆ.</verse>
				<verse number="25">ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಪುತ್ರನ ಸ್ವರವನ್ನು ಕೇಳುವ ಕಾಲ ಬರುತ್ತದೆ. ಈಗಾಗಲೇ ಬಂದಿದೆ. ಈ ಸ್ವರವನ್ನು ಕೇಳುವವರು ಬದುಕುವರು.</verse>
				<verse number="26">ತಂದೆಯು ಸ್ವತಃ ಜೀವವುಳ್ಳವರಾಗಿರುವಂತೆಯೇ ಪುತ್ರನೂ ಸಹ ಸ್ವತಃ ಜೀವವುಳ್ಳವನಾಗಿರುವಂತೆ ಅನುಗ್ರಹ ಮಾಡಿದ್ದಾರೆ.</verse>
				<verse number="27">ನಾನು ಮನುಷ್ಯಪುತ್ರನಾಗಿರುವುದರಿಂದ ನ್ಯಾಯತೀರಿಸುವ ಅಧಿಕಾರವನ್ನು ತಂದೆ ನನಗೆ ಕೊಟ್ಟಿದ್ದಾರೆ.</verse>
				<verse number="28">“ಇದಕ್ಕೆ ಆಶ್ಚರ್ಯಪಡಬೇಡಿರಿ, ಆಗ ಸಮಾಧಿಗಳಲ್ಲಿ ಇರುವವರೆಲ್ಲರೂ ನನ್ನ ಸ್ವರವನ್ನು ಕೇಳಿ ಹೊರಗೆ ಬರುವ ಒಂದುಕಾಲ ಬರುತ್ತದೆ.</verse>
				<verse number="29">ಒಳ್ಳೆಯದನ್ನು ಮಾಡಿದವರು ಜೀವಕ್ಕಾಗಿ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ನ್ಯಾಯತೀರ್ಪಿಗಾಗಿ ಪುನರುತ್ಥಾನವನ್ನೂ ಹೊಂದುವರು.</verse>
				<verse number="30">ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನು. ನಾನು ಕೇಳಿರುವಂತೆಯೇ ತೀರ್ಪು ಮಾಡುತ್ತೇನೆ. ನನ್ನ ತೀರ್ಪು ನ್ಯಾಯವಾದದ್ದು. ಏಕೆಂದರೆ ನಾನು ನನ್ನ ಚಿತ್ತವನ್ನಲ್ಲ, ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ನೆರವೇರಿಸಲು ಅಪೇಕ್ಷಿಸುತ್ತೇನೆ.</verse>
				<verse number="31">“ನನ್ನನ್ನು ಕುರಿತು ನಾನೇ ಸಾಕ್ಷಿಹೇಳಿಕೊಂಡರೆ ನನ್ನ ಸಾಕ್ಷಿಯು ಸತ್ಯವಾದದ್ದಲ್ಲ.</verse>
				<verse number="32">ನನ್ನನ್ನು ಕುರಿತು ಸಾಕ್ಷಿಕೊಡುವವರು ಬೇರೊಬ್ಬರಿದ್ದಾರೆ. ಅವರು ನನ್ನ ವಿಷಯದಲ್ಲಿ ಕೊಡುವ ಸಾಕ್ಷಿಯೇ ಸತ್ಯವಾದುದೆಂದು ನಾನು ಬಲ್ಲೆನು.</verse>
				<verse number="33">“ನೀವು ಯೋಹಾನನ ಬಳಿಗೆ ದೂತರನ್ನು ಕಳುಹಿಸಿದಿರಿ. ಅವನು ಸತ್ಯಕ್ಕೆ ಸಾಕ್ಷಿಕೊಟ್ಟನು.</verse>
				<verse number="34">ನಾನಾದರೋ ಮಾನವರ ಸಾಕ್ಷಿಯನ್ನು ಸ್ವೀಕರಿಸುವುದಿಲ್ಲ. ಆದರೆ ನೀವು ರಕ್ಷಣೆ ಹೊಂದುವಂತೆ ನಾನು ಇವುಗಳನ್ನು ಹೇಳುತ್ತೇನೆ.</verse>
				<verse number="35">ಯೋಹಾನನು ಉರಿದು ಪ್ರಕಾಶಿಸುವ ದೀಪವಾಗಿದ್ದನು. ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಅತ್ಯಾನಂದಪಡಲು ನೀವು ಇಚ್ಚಿಸಿದಿರಿ.</verse>
				<verse number="36">“ಆದರೆ ನನಗೆ ಯೋಹಾನನಿಗಿಂತಲೂ ಮಹಾ ಸಾಕ್ಷಿ ಉಂಟು. ಹೇಗೆಂದರೆ, ತಂದೆ ನನಗೆ ಮಾಡಿ ಮುಗಿಸಲು ಕೊಟ್ಟ ಕೆಲಸಗಳು, ಅಂದರೆ, ನಾನು ಮಾಡುತ್ತಿರುವ ಈ ಕೆಲಸಗಳೇ, ತಂದೆ ನನ್ನನ್ನು ಕಳಿಹಿಸಿದ್ದಾರೆಂದು ನನ್ನನ್ನು ಕುರಿತು ಸಾಕ್ಷಿ ಕೊಡುತ್ತವೆ.</verse>
				<verse number="37">ನನ್ನನ್ನು ಕಳುಹಿಸಿದ ತಂದೆ ತಾವೇ ನನ್ನನ್ನು ಕುರಿತು ಸಾಕ್ಷಿ ಹೇಳಿದ್ದಾರೆ. ನೀವು ಎಂದೂ ಅವರ ಸ್ವರವನ್ನು ಕೇಳಲಿಲ್ಲ, ಅವರ ರೂಪವನ್ನು ಕಾಣಲಿಲ್ಲ.</verse>
				<verse number="38">ಅವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿಲ್ಲ. ಏಕೆಂದರೆ ಅವರು ಕಳುಹಿಸಿದವನನ್ನು ನೀವು ನಂಬುವುದಿಲ್ಲ.</verse>
				<verse number="39">ನೀವು ಪವಿತ್ರ ವೇದದಲ್ಲಿ ನಿತ್ಯಜೀವ ದೊರೆಯುತ್ತದೆ ಎಂದು ನೆನಸಿ, ಅವುಗಳನ್ನು ಪರಿಶೋಧಿಸುತ್ತೀದ್ದಿರಿ. ಆ ಪವಿತ್ರ ವೇದವೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತದೆ.</verse>
				<verse number="40">ಆದರೂ ನೀವು ಜೀವವನ್ನು ಹೊಂದುವುದಕ್ಕಾಗಿ ನನ್ನ ಬಳಿಗೆ ಬರುವುದಕ್ಕೆ ನಿಮಗೆ ಇಷ್ಟವಿಲ್ಲ.</verse>
				<verse number="41">“ನಾನು ಮನುಷ್ಯರಿಂದ ಮಹಿಮೆಯನ್ನು ಸ್ವೀಕರಿಸುವುದಿಲ್ಲ.</verse>
				<verse number="42">ಆದರೆ ನಿಮ್ಮನ್ನು ಬಲ್ಲೆನು. ನಿಮ್ಮ ಹೃದಯದಲ್ಲಿ ದೇವರ ಪ್ರೀತಿ ಇಲ್ಲ.</verse>
				<verse number="43">ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ. ನೀವು ನನ್ನನ್ನು ಸ್ವೀಕರಿಸುವುದಿಲ್ಲ. ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅಂಥವನನ್ನು ಸ್ವೀಕರಿಸುತ್ತೀರಿ.</verse>
				<verse number="44">ಒಬ್ಬರೇ ದೇವರಿಂದ ಬರುವ ಮಹಿಮೆಯನ್ನು ಹುಡುಕದೆ ಒಬ್ಬರಿಂದೊಬ್ಬರಿಗೆ ಬರುವ ಮಹಿಮೆಯನ್ನು ಸ್ವೀಕರಿಸುವ ನಿಮಗೆ ನಂಬಲು ಹೇಗೆ ಸಾಧ್ಯ?</verse>
				<verse number="45">“ತಂದೆಯ ಮುಂದೆ ನಿಮ್ಮ ಮೇಲೆ ನಾನು ದೂರು ಹೇಳುತ್ತಿರುವೆನೆಂದು ನೀವು ನೆನಸಬೇಡಿರಿ. ನಿಮ್ಮ ಮೇಲೆ ದೂರು ಹೇಳುವವನು ಒಬ್ಬನಿದ್ದಾನೆ; ನೀವು ನಿರೀಕ್ಷೆಯಿಟ್ಟಿರುವ ಮೋಶೆಯೇ.</verse>
				<verse number="46">ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ. ಏಕೆಂದರೆ ಅವನು ನನ್ನನ್ನು ಕುರಿತು ಬರೆದಿದ್ದಾನೆ.</verse>
				<verse number="47">ಅವನು ಪವಿತ್ರ ವೇದಗಳಲ್ಲಿ ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬುವಿರಿ?” ಎಂದರು.</verse>
			</chapter>
			<chapter number="6">
				<verse number="1">ಇವುಗಳಾದ ಮೇಲೆ ಯೇಸು ತಿಬೇರಿಯದ ಗಲಿಲಾಯ ಸರೋವರದ ಆಚೆಗೆ ಹೋದರು.</verse>
				<verse number="2">ಯೇಸು ರೋಗಿಗಳಲ್ಲಿ ನಡೆಸಿದ ಸೂಚಕಕಾರ್ಯಗಳನ್ನು ನೋಡಿದ್ದರಿಂದ ಜನರ ದೊಡ್ಡ ಗುಂಪು ಯೇಸುವನ್ನು ಹಿಂಬಾಲಿಸಿತು.</verse>
				<verse number="3">ಯೇಸು ಬೆಟ್ಟವನ್ನೇರಿ ಅಲ್ಲಿ ತಮ್ಮ ಶಿಷ್ಯರೊಂದಿಗೆ ಕುಳಿತುಕೊಂಡರು.</verse>
				<verse number="4">ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾಗಿತ್ತು.</verse>
				<verse number="5">ಯೇಸು ಕಣ್ಣೆತ್ತಿ ನೋಡಿ ಮತ್ತು ಜನರ ದೊಡ್ಡ ಗುಂಪು ಅವರ ಕಡೆಗೆ ಬರುವುದನ್ನು ಕಂಡು ಫಿಲಿಪ್ಪನಿಗೆ, “ಇವರು ಊಟ ಮಾಡಲು ನಾವು ರೊಟ್ಟಿಯನ್ನು ಎಲ್ಲಿಂದ ಕೊಂಡುಕೊಳ್ಳೋಣ?” ಎಂದರು.</verse>
				<verse number="6">ಅವನನ್ನು ಪರೀಕ್ಷಿಸುವುದಕ್ಕಾಗಿ ಯೇಸು ಇದನ್ನು ಹೇಳಿದರು. ಏಕೆಂದರೆ ತಾನು ಮಾಡಲಿರುವುದು ಏನೆಂದು ಯೇಸುವಿಗೆ ತಿಳಿದಿತ್ತು.</verse>
				<verse number="7">ಫಿಲಿಪ್ಪನು ಯೇಸುವಿಗೆ, “ಇವರಲ್ಲಿ ಪ್ರತಿಯೊಬ್ಬನು ಸ್ವಲ್ಪ ಸ್ವಲ್ಪ ತಿಂದರೂ ಆರು ತಿಂಗಳ ಕೂಲಿಯಷ್ಟು ರೊಟ್ಟಿಗಳೂ ಅವರಿಗೆ ಸಾಲುವುದಿಲ್ಲ,” ಎಂದನು.</verse>
				<verse number="8">ಆಗ ಯೇಸುವಿನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ಸಹೋದರನಾದ ಅಂದ್ರೆಯನು</verse>
				<verse number="9">ಯೇಸುವಿಗೆ, “ಇಲ್ಲಿ ಒಬ್ಬ ಹುಡುಗನ ಬಳಿ ಐದು ಜವೆಗೋಧಿಯ ರೊಟ್ಟಿಗಳೂ ಎರಡು ಮೀನುಗಳೂ ಇವೆ. ಆದರೆ ಅಷ್ಟೊಂದು ಜನರಿಗೆ ಇವು ಹೇಗೆ ಸಾಕಾಗುತ್ತವೆ?” ಎಂದನು.</verse>
				<verse number="10">ಯೇಸು, “ಜನರನ್ನು ಊಟಕ್ಕೆ ಕುಳಿತುಕೊಳ್ಳಲು ಹೇಳಿರಿ,” ಎಂದರು. ಆ ಸ್ಥಳದಲ್ಲಿ ಬಹಳ ಹುಲ್ಲು ಇದ್ದುದರಿಂದ ಜನರೆಲ್ಲರೂ ಕುಳಿತುಕೊಂಡರು, ಗಂಡಸರೇ ಐದು ಸಾವಿರ ಮಂದಿ ಇದ್ದರು.</verse>
				<verse number="11">ಆಮೇಲೆ ಯೇಸು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಬೇಕಾದಷ್ಟು ಹಂಚಿದರು. ಅದೇ ರೀತಿಯಲ್ಲಿ ಮೀನುಗಳನ್ನು ಅವರಿಗೆ ಹಂಚಿದರು.</verse>
				<verse number="12">ಅವರೆಲ್ಲರೂ ತಿಂದು ತೃಪ್ತಿಯಾದ ಮೇಲೆ ಯೇಸು ತಮ್ಮ ಶಿಷ್ಯರಿಗೆ, “ಏನೂ ನಷ್ಟವಾಗದಂತೆ ಉಳಿದ ತುಂಡುಗಳನ್ನು ಕೂಡಿಸಿರಿ,” ಎಂದರು.</verse>
				<verse number="13">ಅದರಂತೆ ಅವರು ಐದು ಜವೆಗೋಧಿಯ ರೊಟ್ಟಿಗಳಲ್ಲಿ ತಿಂದವರಿಂದ ಉಳಿದ ತುಂಡುಗಳನ್ನು ಕೂಡಿಸಿ, ಹನ್ನೆರಡು ಬುಟ್ಟಿಗಳಲ್ಲಿ ತುಂಬಿದರು.</verse>
				<verse number="14">ಆ ಜನರು ಯೇಸು ಮಾಡಿದ ಸೂಚಕಕಾರ್ಯವನ್ನು ಕಂಡು, “ಸತ್ಯವಾಗಿಯೂ ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿಯು ಇವರೇ,” ಎಂದರು.</verse>
				<verse number="15">ಅವರು ಬಂದು ತನ್ನನ್ನು ಹಿಡಿದುಕೊಂಡುಹೋಗಿ ಅರಸನನ್ನಾಗಿ ಮಾಡಬೇಕೆಂದಿದ್ದಾರೆಂದು ಯೇಸು ತಿಳಿದು ತಾವೊಬ್ಬರೇ ಪುನಃ ಬೆಟ್ಟದ ಕಡೆಗೆ ಹೋದರು.</verse>
				<verse number="16">ಸಂಜೆಯಾದಾಗ ಯೇಸುವಿನ ಶಿಷ್ಯರು ಸರೋವರಕ್ಕೆ ಹೋಗಿ,</verse>
				<verse number="17">ದೋಣಿಯನ್ನು ಹತ್ತಿ ಸರೋವರ ಮಾರ್ಗವಾಗಿ ಕಪೆರ್ನೌಮಿಗೆ ಸಾಗಿದರು. ಆಗಲೇ ಕತ್ತಲಾಗಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.</verse>
				<verse number="18">ಆಗ ರಭಸವಾದ ಗಾಳಿಯು ಬೀಸಿದ್ದರಿಂದ ಸರೋವರವು ಅಲ್ಲೋಲಕಲ್ಲೋಲವಾಯಿತು.</verse>
				<verse number="19">ಅವರು ದೋಣಿಯನ್ನು ನಡೆಸುತ್ತಾ ಸುಮಾರು ಐದಾರು ಕಿಲೋಮೀಟರಿನಷ್ಟು ದೂರ ಹೋದ ಮೇಲೆ ಯೇಸು ಸರೋವರದ ಮೇಲೆ ನಡೆದು ದೋಣಿಯ ಕಡೆಗೆ ಸಮೀಪಿಸುತ್ತಿರುವುದನ್ನು ಅವರು ಕಂಡು, ಭಯಪಟ್ಟರು.</verse>
				<verse number="20">ಆದರೆ ಯೇಸು ಅವರಿಗೆ, “ನಾನೇ, ಭಯಪಡಬೇಡಿರಿ,” ಎಂದರು.</verse>
				<verse number="21">ಆಗ ಶಿಷ್ಯರು ಯೇಸುವನ್ನು ದೋಣಿಯಲ್ಲಿ ಸೇರಿಸಿಕೊಳ್ಳಬೇಕೆಂದಿದ್ದರು. ಅಷ್ಟರಲ್ಲಿ ದೋಣಿಯು ಅವರು ಹೋಗಬೇಕಾಗಿದ್ದ ದಡಕ್ಕೆ ಸೇರಿತು.</verse>
				<verse number="22">ಮರುದಿನ ಅಲ್ಲಿ ಒಂದೇ ದೋಣಿಯ ಹೊರತು ಬೇರೆ ಇರಲಿಲ್ಲವೆಂದೂ ಯೇಸುವಿನ ಶಿಷ್ಯರು ಮಾತ್ರ ಆ ದೋಣಿಯಲ್ಲಿ ಹೋದರೆಂದೂ ಯೇಸು ತಮ್ಮ ಶಿಷ್ಯರ ಸಂಗಡ ದೋಣಿಯಲ್ಲಿ ಹೋಗಲಿಲ್ಲವೆಂದೂ ಸರೋವರದ ಆಚೆಯಲ್ಲಿ ನಿಂತಿದ್ದ ಜನರು ಅರಿತುಕೊಂಡರು.</verse>
				<verse number="23">ಬೇರೆ ದೋಣಿಗಳು ತಿಬೇರಿಯದಿಂದ ಹೊರಟು, ಕರ್ತ ಯೇಸು ಕೃತಜ್ಞತೆ ಸಲ್ಲಿಸಿ ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.</verse>
				<verse number="24">ಆಗ ಯೇಸು ಮತ್ತು ಅವರ ಶಿಷ್ಯರು ಅಲ್ಲಿ ಇಲ್ಲದಿರುವುದನ್ನು ಜನರು ನೋಡಿ, ದೋಣಿಗಳಲ್ಲಿ ಹತ್ತಿ ಯೇಸುವನ್ನು ಹುಡುಕುತ್ತಾ ಕಪೆರ್ನೌಮಿಗೆ ಬಂದರು.</verse>
				<verse number="25">ಜನರು ಯೇಸುವನ್ನು ಸರೋವರದ ಆಚೆ ಕಡೆಯಲ್ಲಿ ಕಂಡು ಅವರಿಗೆ, “ಗುರುವೇ, ನೀವು ಇಲ್ಲಿಗೆ ಬಂದದ್ದು ಯಾವಾಗ?” ಎಂದರು.</verse>
				<verse number="26">ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.</verse>
				<verse number="27">ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ, ನೀವು ನಿತ್ಯಜೀವಕ್ಕೆ ಉಳಿಯುವ ಆಹಾರಕ್ಕಾಗಿಯೇ ದುಡಿಯಿರಿ. ಅದನ್ನು ಮನುಷ್ಯಪುತ್ರನಾದ ನಾನು ನಿಮಗೆ ಕೊಡುವೆನು. ಇದಕ್ಕಾಗಿ ತಂದೆ ದೇವರು ಮೆಚ್ಚುಗೆಯ ಮುದ್ರೆಯನ್ನು ನನ್ನ ಮೇಲೆ ಹಾಕಿದ್ದಾರೆ,” ಎಂದರು.</verse>
				<verse number="28">ಆಗ ಅವರು ಯೇಸುವಿಗೆ, “ನಾವು ದೇವರ ಕಾರ್ಯವನ್ನು ಮಾಡಬೇಕಾದರೆ ಏನು ಮಾಡಬೇಕು?” ಎಂದು ಕೇಳಿದ್ದಕ್ಕೆ,</verse>
				<verse number="29">ಯೇಸು ಅವರಿಗೆ, “ದೇವರು ಕಳುಹಿಸಿದ ನನ್ನನ್ನು ನೀವು ನಂಬುವುದೇ ದೇವರು ಮೆಚ್ಚುವ ಕಾರ್ಯ,” ಎಂದರು.</verse>
				<verse number="30">ಅದಕ್ಕೆ ಅವರು ಯೇಸುವಿಗೆ, “ಹಾಗಾದರೆ ನಾವು ನೋಡಿ ನಿಮ್ಮನ್ನು ನಂಬುವಂತೆ ಯಾವ ಸೂಚಕಕಾರ್ಯವನ್ನು ಮಾಡುತ್ತೀರಿ?</verse>
				<verse number="31">‘ಅವರಿಗೆ ಪರಲೋಕದಿಂದ ರೊಟ್ಟಿ ಕೊಡಲಾಯಿತು’ ಎಂದು ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ ನಮ್ಮ ಪಿತೃಗಳು ಅರಣ್ಯದಲ್ಲಿ ಮನ್ನಾ ಎಂಬ ಆಹಾರವನ್ನು ತಿಂದರು,” ಎಂದು ಕೇಳಿದರು.</verse>
				<verse number="32">ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮಗೆ ಪರಲೋಕದಿಂದ ರೊಟ್ಟಿಯನ್ನು ಮೋಶೆ ಕೊಡಲಿಲ್ಲ. ನನ್ನ ತಂದೆಯೇ ನಿಮಗೆ ನಿಜವಾದ ರೊಟ್ಟಿಯನ್ನು ಪರಲೋಕದಿಂದಲೇ ಕೊಡುತ್ತಾರೆ.</verse>
				<verse number="33">ಪರಲೋಕದಿಂದ ಇಳಿದುಬಂದು ಲೋಕಕ್ಕೆ ಜೀವವನ್ನು ಕೊಡುವ ದೇವರ ರೊಟ್ಟಿಯು ನಾನೇ,” ಎಂದರು.</verse>
				<verse number="34">ಅದಕ್ಕವರು ಯೇಸುವಿಗೆ, “ಸ್ವಾಮೀ, ಈ ರೊಟ್ಟಿಯನ್ನೇ ನಮಗೆ ಯಾವಾಗಲೂ ಕೊಡು,” ಎಂದರು.</verse>
				<verse number="35">ಯೇಸು ಅವರಿಗೆ, “ನಾನೇ ಜೀವದ ರೊಟ್ಟಿ. ನನ್ನ ಬಳಿಗೆ ಬರುವವರಿಗೆ ಎಂದಿಗೂ ಹಸಿವೆಯಾಗುವುದಿಲ್ಲ; ನನ್ನನ್ನು ನಂಬುವವರಿಗೆ ಎಂದಿಗೂ ದಾಹವಾಗುವುದಿಲ್ಲ.</verse>
				<verse number="36">ಆದರೆ, ‘ನೀವು ನನ್ನನ್ನು ಕಂಡಿದ್ದರೂ ನಂಬಲಿಲ್ಲ,’ ಎಂದು ನಾನು ನಿಮಗೆ ಹೇಳಿದೆನು.</verse>
				<verse number="37">ತಂದೆಯು ನನಗೆಂದು ಕೊಟ್ಟಿರುವ ಪ್ರತಿಯೊಬ್ಬರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವರನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.</verse>
				<verse number="38">ನಾನು ನನ್ನ ಚಿತ್ತವನ್ನು ಮಾಡುವುದಕ್ಕಲ್ಲ. ನನ್ನನ್ನು ಕಳುಹಿಸಿದ ತಂದೆಯ ಚಿತ್ತವನ್ನೇ ಮಾಡುವುದಕ್ಕೆ ಪರಲೋಕದಿಂದ ಬಂದೆನು.</verse>
				<verse number="39">ನನ್ನನ್ನು ಕಳುಹಿಸಿಕೊಟ್ಟ ತಂದೆಯ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ನಾನು ಯಾರನ್ನೂ ಕಳೆದುಕೊಳ್ಳದೆ ಕಡೆಯ ದಿನದಲ್ಲಿ ಅವರನ್ನು ಎಬ್ಬಿಸುವುದೇ.</verse>
				<verse number="40">ನನ್ನ ತಂದೆಯ ಚಿತ್ತವೇನೆಂದರೆ ನನ್ನನ್ನು ನೋಡಿ ನನ್ನಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬರೂ ನಿತ್ಯಜೀವವನ್ನು ಪಡೆಯುವುದೇ; ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು,” ಎಂದು ಹೇಳಿದರು.</verse>
				<verse number="41">“ಪರಲೋಕದಿಂದ ಇಳಿದು ಬಂದ ರೊಟ್ಟಿ ನಾನೇ,” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಯೇಸುವಿನ ವಿಷಯವಾಗಿ ಗೊಣಗುಟ್ಟಿ,</verse>
				<verse number="42">“ಈತನು ಯೋಸೇಫನ ಪುತ್ರ ಯೇಸು ಅಲ್ಲವೇ? ಈತನ ತಂದೆತಾಯಿ ನಮಗೆ ಗೊತ್ತಿಲ್ಲವೇ? ಹಾಗಾದರೆ, ‘ನಾನು ಪರಲೋಕದಿಂದ ಬಂದೆನು,’ ಎಂದು ಈತನು ಹೇಳುವುದು ಹೇಗೆ?” ಎಂದರು.</verse>
				<verse number="43">ಯೇಸು ಅವರಿಗೆ, “ನಿಮ್ಮನಿಮ್ಮೊಳಗೆ ಗೊಣಗುಟ್ಟಬೇಡಿರಿ.</verse>
				<verse number="44">ನನ್ನನ್ನು ಕಳುಹಿಸಿದ ತಂದೆ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬರಲಾರರು. ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು.</verse>
				<verse number="45">‘ಅವರೆಲ್ಲರೂ ದೇವರಿಂದಲೇ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ತಂದೆಯಿಂದ ಕೇಳಿ ಕಲಿತ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ.</verse>
				<verse number="46">ದೇವರಿಂದ ಬಂದಿರುವ ನಾನೇ ತಂದೆಯನ್ನು ನೋಡಿದ್ದೇನೆ, ಬೇರೆ ಯಾರೂ ತಂದೆಯನ್ನು ನೋಡಲಿಲ್ಲ.</verse>
				<verse number="47">ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವರು ನಿತ್ಯಜೀವವನ್ನು ಹೊಂದಿದ್ದಾರೆ.</verse>
				<verse number="48">ನಾನೇ ಜೀವದ ರೊಟ್ಟಿ.</verse>
				<verse number="49">ನಿಮ್ಮ ಪಿತೃಗಳು ಅರಣ್ಯದಲ್ಲಿ ‘ಮನ್ನಾ’ ತಿಂದರೂ ಸತ್ತುಹೋದರು.</verse>
				<verse number="50">ಯಾರು ತಿಂದರೂ ಸಾಯದೇ ಇರುವಂತೆ ಪರಲೋಕದಿಂದ ಇಳಿದು ಬಂದ ಜೀವದ ರೊಟ್ಟಿ ಇದೇ.</verse>
				<verse number="51">ನಾನೇ ಪರಲೋಕದಿಂದ ಬಂದ ಜೀವದ ರೊಟ್ಟಿ. ಈ ರೊಟ್ಟಿಯನ್ನು ಯಾರು ತಿನ್ನುವರೋ ಅವರು ಸದಾಕಾಲವೂ ಬದುಕುವರು. ಲೋಕದ ಜೀವಕ್ಕಾಗಿ ನಾನು ಕೊಡುವ ರೊಟ್ಟಿಯು ನನ್ನ ಮಾಂಸವೇ,” ಎಂದರು.</verse>
				<verse number="52">ಆದ್ದರಿಂದ ಯೆಹೂದ್ಯರು ಒಬ್ಬರಿಗೊಬ್ಬರು ಚರ್ಚೆಮಾಡುತ್ತಾ, “ಈ ಮನುಷ್ಯನು ತನ್ನ ಮಾಂಸವನ್ನು ತಿನ್ನುವುದಕ್ಕೆ ನಮಗೆ ಹೇಗೆ ಕೊಡುತ್ತಾನೆ?” ಎಂದರು.</verse>
				<verse number="53">ಯೇಸು ಅವರಿಗೆ, “ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಮನುಷ್ಯಪುತ್ರನಾದ ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ಜೀವವಿರುವುದಿಲ್ಲ.</verse>
				<verse number="54">ಯಾರು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾರೋ ಅವರು ನಿತ್ಯಜೀವವನ್ನು ಹೊಂದಿದ್ದಾರೆ, ನಾನು ಅವರನ್ನು ಕಡೆಯ ದಿನದಲ್ಲಿ ಎಬ್ಬಿಸುವೆನು.</verse>
				<verse number="55">ನನ್ನ ಮಾಂಸವು ನಿಜವಾದ ಆಹಾರವೂ ನನ್ನ ರಕ್ತವು ನಿಜವಾದ ಪಾನವೂ ಆಗಿದೆ.</verse>
				<verse number="56">ಯಾರು ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುತ್ತಾರೋ ಅವರು ನನ್ನಲ್ಲಿ ನೆಲೆಸಿರುತ್ತಾರೆ. ನಾನು ಅವರಲ್ಲಿ ನೆಲೆಸಿರುತ್ತೇನೆ.</verse>
				<verse number="57">ಜೀವವುಳ್ಳ ತಂದೆಯು ನನ್ನನ್ನು ಕಳುಹಿಸಿದ್ದಾರೆ. ನಾನು ತಂದೆಯ ನಿಮಿತ್ತವಾಗಿ ಜೀವಿಸುವಂತೆಯೇ ನನ್ನನ್ನು ತಿನ್ನುವವರು ನನ್ನ ನಿಮಿತ್ತವಾಗಿಯೇ ಜೀವಿಸುವರು.</verse>
				<verse number="58">ಪರಲೋಕದಿಂದ ಬಂದ ರೊಟ್ಟಿಯು ಇದೇ. ನಿಮ್ಮ ಪಿತೃಗಳು ‘ಮನ್ನಾ’ ತಿಂದರೂ ಸತ್ತರು. ಇದು ಹಾಗಲ್ಲ, ಈ ರೊಟ್ಟಿಯನ್ನು ತಿನ್ನುವವರು ಸದಾಕಾಲಕ್ಕೂ ಜೀವಿಸುವರು,” ಎಂದರು.</verse>
				<verse number="59">ಕಪೆರ್ನೌಮಿನ ಸಭಾಮಂದಿರದಲ್ಲಿ ಬೋಧಿಸುತ್ತಿರುವಾಗ ಯೇಸು ಈ ಮಾತುಗಳನ್ನು ಹೇಳಿದರು.</verse>
				<verse number="60">ಯೇಸುವಿನ ಶಿಷ್ಯರಲ್ಲಿ ಅನೇಕರು ಈ ಮಾತುಗಳನ್ನು ಕೇಳಿ, “ಇದು ಕಠಿಣವಾದ ಮಾತು. ಇದನ್ನು ಯಾರು ಪಾಲಿಸುವರು?” ಎಂದರು.</verse>
				<verse number="61">ತಮ್ಮ ಶಿಷ್ಯರು ಇದನ್ನು ಕುರಿತು ಗೊಣಗುಟ್ಟುತ್ತಾರೆಂದು ಯೇಸು ತಮ್ಮಲ್ಲಿ ತಿಳಿದುಕೊಂಡು ಅವರಿಗೆ, “ಇದು ನಿಮಗೆ ಬೇಸರವಾಯಿತೋ?</verse>
				<verse number="62">ಹಾಗಾದರೆ ಮನುಷ್ಯಪುತ್ರನಾದ ನಾನು ಮೊದಲಿದ್ದ ಕಡೆಗೆ ಏರಿ ಹೋಗುವುದನ್ನು ನೀವು ನೋಡುವುದಾದರೆ ಏನನ್ನುವಿರಿ?</verse>
				<verse number="63">ಬದುಕಿಸುವುದು ದೇವರ ಆತ್ಮವೇ, ನರಮಾಂಸವಾದರೋ ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ನುಡಿದ ಮಾತುಗಳೇ ದೇವರಾತ್ಮವೂ ಜೀವವೂ ಆಗಿರುತ್ತವೆ.</verse>
				<verse number="64">ಆದರೆ ನಂಬದ ಕೆಲವರು ನಿಮ್ಮಲ್ಲಿ ಇದ್ದಾರೆ,” ಎಂದರು. ನಂಬದವರು ಯಾರೆಂದೂ ತನ್ನನ್ನು ಹಿಡಿದುಕೊಡುವವನು ಯಾರೆಂದೂ ಯೇಸು ಮೊದಲಿನಿಂದಲೂ ತಿಳಿದಿದ್ದರು.</verse>
				<verse number="65">ಯೇಸು ಮುಂದುವರಿಸಿ ಹೇಳಿದ್ದೇನೆಂದರೆ, “ಯಾರನ್ನಾದರೂ ನನ್ನ ತಂದೆಯು ನನಗೆ ಕೊಟ್ಟರಷ್ಟೇ ಅವರು ನನ್ನ ಬಳಿಗೆ ಬರಲು ಸಾಧ್ಯ, ಎಂದು ನಾನು ನಿಮಗೆ ಹೇಳಿದ್ದು ಇದಕ್ಕಾಗಿಯೇ.”</verse>
				<verse number="66">ಅಂದಿನಿಂದ ಯೇಸುವಿನ ಶಿಷ್ಯರಲ್ಲಿ ಅನೇಕರು ಹಿಂದಕ್ಕೆ ಹೊರಟು ಹೋದರು ಮತ್ತು ಯೇಸುವಿನ ಸಂಗಡ ಸಂಚಾರ ಮಾಡಲಿಲ್ಲ.</verse>
				<verse number="67">ಆದಕಾರಣ ಯೇಸು ಹನ್ನೆರಡು ಮಂದಿ ಶಿಷ್ಯರಿಗೆ, “ನೀವು ಸಹ ಹೋಗಬೇಕೆಂದು ಇದ್ದೀರಾ?” ಎಂದು ಕೇಳಲು,</verse>
				<verse number="68">ಸೀಮೋನ್ ಪೇತ್ರನು ಯೇಸುವಿಗೆ, “ಸ್ವಾಮೀ, ನಾವು ಯಾರ ಬಳಿಗೆ ಹೋಗೋಣ? ನಿಮ್ಮಲ್ಲಿಯೇ ನಿತ್ಯಜೀವದ ವಾಕ್ಯಗಳಿವೆ.</verse>
				<verse number="69">ನೀವು ದೇವರ ಪರಿಶುದ್ಧರು ಎಂದು ನಾವು ನಂಬಿ ತಿಳಿದಿದ್ದೇವೆ,” ಎಂದನು.</verse>
				<verse number="70">ಅದಕ್ಕೆ ಯೇಸು ಅವರಿಗೆ, “ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿಕೊಂಡೆನಲ್ಲವೇ? ಆದರೆ ನಿಮ್ಮಲ್ಲಿಯೂ ಒಬ್ಬನು ಪಿಶಾಚನಾಗಿದ್ದಾನೆ,” ಎಂದರು.</verse>
				<verse number="71">ಸೀಮೋನನ ಮಗ ಇಸ್ಕರಿಯೋತ ಯೂದನ ವಿಷಯವಾಗಿ ಯೇಸು ಹೀಗೆ ಹೇಳಿದರು. ಏಕೆಂದರೆ ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದ ಇವನೇ ಯೇಸುವನ್ನು ಹಿಡಿದು ಕೊಡುವುದಕ್ಕಿದ್ದನು.</verse>
			</chapter>
			<chapter number="7">
				<verse number="1">ಇವುಗಳಾದ ಮೇಲೆ ಯೇಸು ಗಲಿಲಾಯದ ಪ್ರಾಂತದಲ್ಲಿ ಸಂಚಾರ ಮಾಡಿದರು. ಯೆಹೂದ್ಯರು ಯೇಸುವನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದುದರಿಂದ ಯೂದಾಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.</verse>
				<verse number="2">ಆಗ ಯೆಹೂದ್ಯರ ಗುಡಾರಗಳ ಹಬ್ಬವು ಹತ್ತಿರವಾಗಿತ್ತು.</verse>
				<verse number="3">ಆದ್ದರಿಂದ ಯೇಸುವಿನ ಸಹೋದರರು, “ನೀನು ಮಾಡುವ ಕ್ರಿಯೆಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು.</verse>
				<verse number="4">ಏಕೆಂದರೆ ಪ್ರಖ್ಯಾತನಾಗಲು ಬಯಸುವ ಯಾರೂ ರಹಸ್ಯವಾಗಿ ಯಾವುದನ್ನೂ ಮಾಡುವುದಿಲ್ಲ. ನೀನು ಇವುಗಳನ್ನು ಮಾಡುವುದಾದರೆ, ಲೋಕಕ್ಕೆ ನಿನ್ನನ್ನು ನೀನೇ ತೋರ್ಪಡಿಸಿಕೋ,” ಎಂದು ಯೇಸುವಿಗೆ ಹೇಳಿದರು.</verse>
				<verse number="5">ಏಕೆಂದರೆ ಯೇಸುವಿನ ಸಹೋದರರು ಸಹ ಅವರನ್ನು ನಂಬಲಿಲ್ಲ.</verse>
				<verse number="6">ಅದಕ್ಕೆ ಯೇಸು ಅವರಿಗೆ, “ನನ್ನ ಸಮಯವು ಇನ್ನೂ ಬಂದಿಲ್ಲ. ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.</verse>
				<verse number="7">ಲೋಕವು ನಿಮ್ಮನ್ನು ದ್ವೇಷಿಸಲಾರದು. ಲೋಕದ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯದಲ್ಲಿ ನಾನು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.</verse>
				<verse number="8">ನೀವು ಈ ಹಬ್ಬಕ್ಕೆ ಹೋಗಿರಿ. ನಾನು ಈ ಹಬ್ಬಕ್ಕೆ ಹೋಗುವುದಿಲ್ಲ. ಏಕೆಂದರೆ ನನ್ನ ಸಮಯವು ಇನ್ನೂ ಪೂರ್ಣವಾಗಿ ಬರಲಿಲ್ಲ,” ಎಂದರು.</verse>
				<verse number="9">ಯೇಸು ಈ ಮಾತುಗಳನ್ನು ಅವರಿಗೆ ಹೇಳಿದ ಮೇಲೆ ಗಲಿಲಾಯದಲ್ಲಿಯೇ ಉಳಿದರು.</verse>
				<verse number="10">ಆದರೆ ಯೇಸುವಿನ ಸಹೋದರರು ಹಬ್ಬಕ್ಕೆ ಹೋದರು. ಯೇಸು ಸಹ ಬಹಿರಂಗವಾಗಿ ಹೋಗದೆ ರಹಸ್ಯವಾಗಿ ಅಲ್ಲಿಗೆ ಹೋದರು.</verse>
				<verse number="11">ಯೆಹೂದ್ಯರು ಆ ಹಬ್ಬದಲ್ಲಿ, “ಆ ಮನುಷ್ಯನು ಎಲ್ಲಿ?” ಎಂದು ಹುಡುಕುತ್ತಿದ್ದರು.</verse>
				<verse number="12">ಜನರ ಗುಂಪುಗಳಲ್ಲಿ ಯೇಸುವಿನ ವಿಷಯವಾಗಿ ಬಹಳ ಗೊಣಗುಟ್ಟುವಿಕೆ ಇತ್ತು. ಏಕೆಂದರೆ ಕೆಲವರು, “ಆತ ಒಳ್ಳೆಯ ಮನುಷ್ಯ,” ಎಂದರು. ಬೇರೆ ಕೆಲವರು, “ಇಲ್ಲ ಆತ ಜನರಿಗೆ ಮೋಸಮಾಡುತ್ತಾನೆ,” ಎಂದರು.</verse>
				<verse number="13">ಆದರೂ ಯೆಹೂದ್ಯರ ಭಯದ ನಿಮಿತ್ತ ಯೇಸುವಿನ ವಿಷಯದಲ್ಲಿ ಯಾರೂ ಬಹಿರಂಗವಾಗಿ ಮಾತನಾಡಲಿಲ್ಲ.</verse>
				<verse number="14">ಯೇಸು ಆ ಹಬ್ಬದ ಮಧ್ಯದಲ್ಲಿ ದೇವಾಲಯಕ್ಕೆ ಹೋಗಿ ಬೋಧಿಸಿದರು.</verse>
				<verse number="15">ಯೆಹೂದ್ಯರು ಆಶ್ಚರ್ಯಪಟ್ಟು, “ಏನನ್ನೂ ಕಲಿಯದಿರುವ ಈ ಮನುಷ್ಯನಿಗೆ ಇಷ್ಟೆಲ್ಲಾ ಜ್ಞಾನ ತಿಳಿದಿರುವುದು ಹೇಗೆ?” ಎಂದರು.</verse>
				<verse number="16">ಅದಕ್ಕೆ ಯೇಸು ಅವರಿಗೆ, “ನನ್ನ ಬೋಧನೆಯು ನನ್ನದಲ್ಲ, ನನ್ನನ್ನು ಕಳುಹಿಸಿದ ತಂದೆಯದೇ ಆಗಿದೆ.</verse>
				<verse number="17">ಯಾರಾದರೂ ದೇವರ ಚಿತ್ತವನ್ನು ಮಾಡಬಯಸುವುದಾದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಮಾತನಾಡುತ್ತೇನೋ ಎಂಬುದು ಅವರಿಗೆ ತಿಳಿಯುವುದು.</verse>
				<verse number="18">ತಮ್ಮಷ್ಟಕ್ಕೆ ತಾವೇ ಮಾತನಾಡುವವರು ತಮ್ಮ ಸ್ವಂತ ಮಹಿಮೆಯನ್ನು ಹುಡುಕುತ್ತಾರೆ. ಆದರೆ ತನ್ನನ್ನು ಕಳುಹಿಸಿದ ತಂದೆಯ ಮಹಿಮೆಯನ್ನು ಹುಡುಕುವ ಮನುಷ್ಯನು ಸತ್ಯವಂತನು; ಆತನಲ್ಲಿ ಅನೀತಿಯಿಲ್ಲ.</verse>
				<verse number="19">ಮೋಶೆಯು ನಿಮಗೆ ನಿಯಮವನ್ನು ಕೊಡಲಿಲ್ಲವೇ? ಆದರೂ ನಿಮ್ಮಲ್ಲಿ ಯಾರೂ ಆ ನಿಯಮದಂತೆ ನಡೆಯುವುದಿಲ್ಲ. ನೀವು ನನ್ನನ್ನು ಕೊಲ್ಲಲು ಹುಡುಕುವುದೇಕೆ?” ಎಂದು ಕೇಳಿದರು.</verse>
				<verse number="20">ಅದಕ್ಕೆ ಜನರು, “ನಿನಗೆ ದೆವ್ವ ಹಿಡಿದಿದೆ. ನಿನ್ನನ್ನು ಕೊಲ್ಲುವುದಕ್ಕೆ ಹುಡುಕುವವರು ಯಾರು?” ಎಂದರು.</verse>
				<verse number="21">ಯೇಸು ಅವರಿಗೆ, “ನಾನು ಒಂದು ಕ್ರಿಯೆಯನ್ನು ಮಾಡಿದೆನು. ಅದಕ್ಕೆ ನೀವೆಲ್ಲರೂ ಆಶ್ವರ್ಯಪಡುತ್ತೀರಿ.</verse>
				<verse number="22">ಮೋಶೆ ನಿಮಗೆ ಸುನ್ನತಿಯನ್ನು ಇದಕ್ಕಾಗಿಯೇ ಕೊಟ್ಟನು. ಅದು ಮೋಶೆಯಿಂದಾಗಿರದೆ ನಿಮ್ಮ ಪಿತೃಗಳಿಂದಾದದ್ದು. ಆದರೆ ನೀವು ಸಬ್ಬತ್ ದಿನದಲ್ಲಿಯೂ ಸುನ್ನತಿ ಮಾಡುತ್ತೀರಿ.</verse>
				<verse number="23">ಮೋಶೆಯ ನಿಯಮವನ್ನು ಉಲ್ಲಂಘಿಸದೆ ನೀವು ಸಬ್ಬತ್ ದಿನದಲ್ಲಿ ಒಬ್ಬನಿಗೆ ಸುನ್ನತಿಯನ್ನು ಮಾಡುವುದಾದರೆ ನಾನು ಒಬ್ಬ ಮನುಷ್ಯನನ್ನು ಸಬ್ಬತ್ ದಿನದಲ್ಲಿ ಸಂಪೂರ್ಣವಾಗಿ ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ನೀವು ಏಕೆ ಕೋಪಗೊಳ್ಳುತ್ತೀರಿ?</verse>
				<verse number="24">ತೋರಿಕೆಗೆ ಅನುಸಾರವಾಗಿ ತೀರ್ಪುಮಾಡಬೇಡಿರಿ. ಆದರೆ ನೀತಿಯ ತೀರ್ಪನ್ನು ಮಾಡಿರಿ,” ಎಂದರು.</verse>
				<verse number="25">ಆಮೇಲೆ ಯೆರೂಸಲೇಮಿನ ಕೆಲವರು, “ಅವರು ಕೊಲ್ಲಬೇಕೆಂದು ಹುಡುಕುವುದು ಈತನನ್ನೇ ಅಲ್ಲವೇ?</verse>
				<verse number="26">ಇಗೋ, ಈತನು ಬಹಿರಂಗವಾಗಿ ಮಾತನಾಡುತ್ತಿದ್ದಾನೆ. ಆದರೆ ಅವರು ಈತನಿಗೆ ಏನೂ ಹೇಳುವುದಿಲ್ಲ. ಬಹುಶಃ ಈತನೇ ನಿಜವಾದ ಕ್ರಿಸ್ತ ಎಂದು ಅಧಿಕಾರಿಗಳು ತಿಳಿದುಕೊಂಡಿದ್ದಾರೋ?</verse>
				<verse number="27">ಆದರೆ ಈತನು ಎಲ್ಲಿಂದ ಬಂದವನೆಂದು ನಾವು ಬಲ್ಲೆವು. ಆದರೂ ಕ್ರಿಸ್ತನು ಬಂದಾಗ ಆತನು ಎಲ್ಲಿಂದ ಬಂದವನೆಂದು ಯಾರಿಗೂ ತಿಳಿಯದು,” ಎಂದರು.</verse>
				<verse number="28">ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸು, “ನೀವು ನನ್ನನ್ನು ಬಲ್ಲಿರಿ, ನಾನು ಎಲ್ಲಿಂದ ಬಂದವನೆಂದೂ ನೀವು ಬಲ್ಲಿರಿ. ನಾನು ನನ್ನಷ್ಟಕ್ಕೆ ನಾನೇ ಬಂದವನಲ್ಲ. ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ತಂದೆಯನ್ನು ನೀವು ಅರಿತವರಲ್ಲ.</verse>
				<verse number="29">ನಾನಾದರೋ ಅವರನ್ನು ಅರಿತಿದ್ದೇನೆ. ಏಕೆಂದರೆ ನಾನು ಅವರ ಕಡೆಯಿಂದ ಬಂದವನು. ಅವರೇ ನನ್ನನ್ನು ಕಳುಹಿಸಿಕೊಟ್ಟಿದ್ದಾರೆ,” ಎಂದು ಗಟ್ಟಿಯಾಗಿ ಕೂಗಿ ಹೇಳಿದರು.</verse>
				<verse number="30">ಆಗ ಅವರು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಅವರ ಸಮಯ ಇನ್ನೂ ಬಾರದೆ ಇದ್ದುದರಿಂದ ಅವರ ಮೇಲೆ ಯಾರೂ ಕೈಹಾಕಲಿಲ್ಲ.</verse>
				<verse number="31">ಜನರಲ್ಲಿ ಅನೇಕರು ಯೇಸುವನ್ನು ನಂಬಿ, “ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕಕಾರ್ಯಗಳನ್ನು ಮಾಡುವನೋ?” ಎಂದರು.</verse>
				<verse number="32">ಯೇಸುವಿನ ವಿಷಯವಾಗಿ ಜನರು ತಮ್ಮತಮ್ಮೊಳಗೆ ಮಾತನಾಡುವುದನ್ನು ಫರಿಸಾಯರು ಕೇಳಿದರು. ಫರಿಸಾಯರು ಮತ್ತು ಮುಖ್ಯಯಾಜಕರು ಯೇಸುವನ್ನು ಬಂಧಿಸಲು ಕಾವಲುಗಾರರನ್ನು ಕಳುಹಿಸಿದರು.</verse>
				<verse number="33">ಯೇಸು ಅವರಿಗೆ, “ಇನ್ನು ಸ್ವಲ್ಪಕಾಲ ನಾನು ನಿಮ್ಮೊಂದಿಗಿದ್ದು ಅನಂತರ ನನ್ನನ್ನು ಕಳುಹಿಸಿದ ತಂದೆಯ ಬಳಿಗೆ ಹೋಗುತ್ತೇನೆ.</verse>
				<verse number="34">ನೀವು ನನ್ನನ್ನು ಹುಡುಕುವಿರಿ. ಆದರೆ ನನ್ನನ್ನು ಕಾಣುವುದಿಲ್ಲ; ನಾನಿರುವಲ್ಲಿಗೆ ನೀವು ಬರಲಾರಿರಿ,” ಎಂದರು.</verse>
				<verse number="35">ಆಗ ಯೆಹೂದಿ ನಾಯಕರು, “ನಾವು ಈತನನ್ನು ಕಾಣದ ಹಾಗೆ ಈತ ಎಲ್ಲಿಗೆ ಹೋಗಲಿದ್ದಾನೆ? ಗ್ರೀಕರ ನಡುವೆ ಚದರಿ ಹೋದವರ ಬಳಿಗೆ ಹೋಗಿ ಗ್ರೀಕರಿಗೆ ಬೋಧಿಸುವನೋ?</verse>
				<verse number="36">ಈತನು, ‘ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಾಣುವುದಿಲ್ಲ ಮತ್ತು ನಾನಿರುವಲ್ಲಿಗೆ ನೀವು ಬರಲಾರಿರಿ,’ ಎಂದು ಹೇಳಿದ ಮಾತು ಏನಾಗಿರಬಹುದು?” ಎಂದು ತಮ್ಮೊಳಗೆ ಮಾತನಾಡಿಕೊಂಡರು.</verse>
				<verse number="37">ಹಬ್ಬದ ಆ ಮಹಾದಿವಸವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು, “ಯಾರಿಗಾದರೂ ಬಾಯಾರಿಕೆಯಾಗಿದ್ದರೆ ಅವರು ನನ್ನ ಬಳಿಗೆ ಬಂದು ಕುಡಿಯಲಿ.</verse>
				<verse number="38">ಪವಿತ್ರ ವೇದವು ಹೇಳಿದ ಪ್ರಕಾರ ನನ್ನಲ್ಲಿ ನಂಬಿಕೆಯಿಡುವವರ ಅಂತರಂಗದಿಂದ ಜೀವಜಲದ ಹೊಳೆಗಳು ಹರಿಯುವವು,” ಎಂದು ಕೂಗಿ ಹೇಳಿದರು.</verse>
				<verse number="39">ಆದರೆ ಯೇಸು ತಮ್ಮಲ್ಲಿ ನಂಬಿಕೆಯಿಡುವವರು ಹೊಂದಲಿರುವ ಪವಿತ್ರಾತ್ಮರನ್ನು ಕುರಿತು ಹೀಗೆ ಹೇಳಿದರು. ಯೇಸು ಇನ್ನೂ ಮಹಿಮೆ ಹೊಂದಿರಲಿಲ್ಲ. ಈ ಕಾರಣದಿಂದ ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ.</verse>
				<verse number="40">ಆದ್ದರಿಂದ ಜನರಲ್ಲಿ ಕೆಲವರು ಈ ಮಾತನ್ನು ಕೇಳಿದಾಗ, “ಈತನು ನಿಜವಾಗಿಯೂ ಪ್ರವಾದಿಯಾಗಿದ್ದಾನೆ,” ಎಂದರು.</verse>
				<verse number="41">ಬೇರೆಯವರು, “ಈತನೇ ಕ್ರಿಸ್ತನು,” ಎಂದರು. ಆದರೆ ಇನ್ನೂ ಕೆಲವರು, “ಕ್ರಿಸ್ತನು ಗಲಿಲಾಯದಿಂದ ಬರುವುದು ಹೇಗೆ?</verse>
				<verse number="42">‘ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತ್ಲೆಹೇಮೆಂಬ ಊರಿನಿಂದಲೂ ಬರುವನು,’ ಎಂದು ಪವಿತ್ರ ವೇದವು ಹೇಳುತ್ತದಲ್ಲವೇ?” ಎಂದರು.</verse>
				<verse number="43">ಹೀಗೆ ಯೇಸುವಿನ ನಿಮಿತ್ತವಾಗಿ ಜನರಲ್ಲಿ ಭೇದ ಉಂಟಾಯಿತು.</verse>
				<verse number="44">ಅವರಲ್ಲಿ ಕೆಲವರು ಯೇಸುವನ್ನು ಬಂಧಿಸಬೇಕೆಂದಿದ್ದರು. ಆದರೆ ಯಾರೂ ಯೇಸುವಿನ ಮೇಲೆ ಕೈಹಾಕಲಿಲ್ಲ.</verse>
				<verse number="45">ಬಳಿಕ ಕಾವಲುಗಾರರು, ಮುಖ್ಯಯಾಜಕರ ಹಾಗೂ ಫರಿಸಾಯರ ಬಳಿಗೆ ಬಂದಾಗ ಅವರು, “ನೀವು ಏಕೆ ಆತನನ್ನು ಹಿಡಿದು ತರಲಿಲ್ಲ?” ಎಂದು ಕೇಳಿದರು.</verse>
				<verse number="46">ಅದಕ್ಕೆ ಕಾವಲುಗಾರರು, “ಯಾವ ಮನುಷ್ಯನೂ ಎಂದೂ ಈತನು ಮಾತನಾಡುವಂತೆ ಮಾತನಾಡಿದ್ದಿಲ್ಲ,” ಎಂದರು.</verse>
				<verse number="47">ಆಗ ಫರಿಸಾಯರು ಅವರಿಗೆ, “ನೀವು ಸಹ ಮರುಳಾದೀರಾ?</verse>
				<verse number="48">ಅಧಿಕಾರಿಗಳಲ್ಲಿಯೂ ಫರಿಸಾಯರಲ್ಲಿಯೂ ಯಾರಾದರೂ ಯೇಸುವನ್ನು ನಂಬಿದ್ದುಂಟೇ?</verse>
				<verse number="49">ಆದರೆ ಮೋಶೆಯ ನಿಯಮವನ್ನು ಅರಿಯದ ಈ ಜನರು ಶಾಪಗ್ರಸ್ತರೇ,” ಎಂದು ಹೇಳಿದರು.</verse>
				<verse number="50">ಯೇಸುವಿನ ಬಳಿಗೆ ಒಮ್ಮೆ ಬಂದಿದ್ದ ನಿಕೊದೇಮನು ಅವರಲ್ಲಿ ಒಬ್ಬನಾಗಿದ್ದನು. ಅವನು ಅವರಿಗೆ,</verse>
				<verse number="51">“ಒಬ್ಬ ಮನುಷ್ಯನನ್ನು ಮೊದಲು ವಿಚಾರಿಸಿ, ಅವನು ಮಾಡುವುದೇನೆಂದು ತಿಳಿದುಕೊಳ್ಳದೆ ನಮ್ಮ ನಿಯಮವು ಅವನಿಗೆ ತೀರ್ಪುಮಾಡುವುದುಂಟೇ?” ಎಂದನು.</verse>
				<verse number="52">ಅವರು ಅವನಿಗೆ, “ನೀನು ಸಹ ಗಲಿಲಾಯದವನೋ? ಗಲಿಲಾಯದಿಂದ ಒಬ್ಬ ಪ್ರವಾದಿಯೂ ಏಳುವುದಿಲ್ಲ, ನೀನೇ ಪರಿಶೋಧಿಸಿ ನೋಡು,” ಎಂದರು.</verse>
				<verse number="53">ಬಳಿಕ ಎಲ್ಲರೂ ತಮ್ಮ ತಮ್ಮ ಮನೆಗೆ ಹೋದರು.</verse>
			</chapter>
			<chapter number="8">
				<verse number="1">ಯೇಸುವಾದರೋ ಓಲಿವ್ ಮರಗಳ ಗುಡ್ಡಕ್ಕೆ ಹೋದರು.</verse>
				<verse number="2">ಬೆಳಿಗ್ಗೆ ಯೇಸು ತಿರುಗಿ ದೇವಾಲಯಕ್ಕೆ ಬಂದಾಗ ಎಲ್ಲಾ ಜನರು ಅವರ ಬಳಿಗೆ ಬಂದರು. ಯೇಸು ಕುಳಿತುಕೊಂಡು ಅವರಿಗೆ ಬೋಧಿಸಿದರು.</verse>
				<verse number="3">ಆಗ ವ್ಯಭಿಚಾರದಲ್ಲಿ ಸಿಕ್ಕಿದ ಒಬ್ಬ ಸ್ತ್ರೀಯನ್ನು ನಿಯಮ ಬೋಧಕರು ಮತ್ತು ಫರಿಸಾಯರು ಹಿಡಿದು ಯೇಸುವಿನ ಬಳಿಗೆ ತಂದು ಆಕೆಯನ್ನು ನಡುವೆ ನಿಲ್ಲಿಸಿದರು.</verse>
				<verse number="4">ಅವರು ಯೇಸುವಿಗೆ, “ಬೋಧಕರೇ, ಈ ಸ್ತ್ರೀ ವ್ಯಭಿಚಾರ ಮಾಡುವಾಗಲೇ ಸಿಕ್ಕಿಬಿದ್ದಳು.</verse>
				<verse number="5">ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯು ನಿಯಮದಲ್ಲಿ ನಮಗೆ ಆಜ್ಞಾಪಿಸಿದ್ದಾನೆ. ಆದ್ದರಿಂದ ನೀವು ಏನು ಹೇಳುತ್ತೀರಿ?” ಎಂದು ಕೇಳಿದರು.</verse>
				<verse number="6">ಅವರು ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿ ತಪ್ಪು ಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದರು.</verse>
				<verse number="7">ಅವರು ಬಿಡದೆ ಪ್ರಶ್ನೆಗಳನ್ನು ಕೇಳುತ್ತಿರಲು ಯೇಸು ನೆಟ್ಟಗೆ ಕುಳಿತುಕೊಂಡು, “ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಇವಳ ಮೇಲೆ ಕಲ್ಲು ಎಸೆಯಲಿ,” ಎಂದು ಅವರಿಗೆ ಹೇಳಿದರು.</verse>
				<verse number="8">ತಿರುಗಿ ಯೇಸು ಬಗ್ಗಿಕೊಂಡು ನೆಲದ ಮೇಲೆ ಬರೆಯತೊಡಗಿದರು.</verse>
				<verse number="9">ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಕಿರಿಯರವರೆಗೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬರೇ ಉಳಿದರು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.</verse>
				<verse number="10">ಯೇಸು ನೆಟ್ಟಗೆ ಕುಳಿತುಕೊಂಡು ಆಕೆಗೆ, “ಅಮ್ಮಾ ಅವರು ಎಲ್ಲಿದ್ದಾರೆ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೋ?” ಎಂದರು.</verse>
				<verse number="11">ಅದಕ್ಕೆ ಆಕೆಯು, “ಸ್ವಾಮಿ, ಯಾರೂ ಶಿಕ್ಷೆ ವಿಧಿಸಲಿಲ್ಲ,” ಎಂದಳು. ಯೇಸು ಆಕೆಗೆ, “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪ ಮಾಡಬೇಡ,” ಎಂದರು.</verse>
				<verse number="12">ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವರು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ. ಅವರು ಜೀವದ ಬೆಳಕನ್ನು ಹೊಂದಿರುವರು,” ಎಂದು ಹೇಳಿದರು.</verse>
				<verse number="13">ಫರಿಸಾಯರು ಯೇಸುವಿಗೆ, “ನಿನ್ನ ವಿಷಯವಾಗಿ ನೀನೇ ಸಾಕ್ಷಿ ನೀಡುತ್ತಿರುವೆ, ನಿನ್ನ ಸಾಕ್ಷಿಯು ಸತ್ಯವಾದುದ್ದಲ್ಲ,” ಎಂದು ಹೇಳಿದರು.</verse>
				<verse number="14">ಯೇಸು ಅವರಿಗೆ, “ನಾನೇ ನನ್ನ ವಿಷಯವಾಗಿ ನಾನು ಸಾಕ್ಷಿ ನೀಡಿದರೂ ನನ್ನ ಸಾಕ್ಷಿ ಸತ್ಯವಾದದ್ದು. ಏಕೆಂದರೆ ನಾನು ಎಲ್ಲಿಂದ ಬಂದೆ ಮತ್ತು ಎಲ್ಲಿಗೆ ಹೋಗುತ್ತೇನೆಂದು ನನಗೆ ತಿಳಿದಿದೆ. ಆದರೆ ನಾನು ಎಲ್ಲಿಂದ ಬಂದೆ ಇಲ್ಲವೆ ಎಲ್ಲಿಗೆ ಹೋಗುತ್ತೇನೋ ನಿಮಗೆ ತಿಳಿಯದು.</verse>
				<verse number="15">ನೀವು ಮಾನವ ರೀತಿಯಲ್ಲಿ ತೀರ್ಪು ಮಾಡುತ್ತೀರಿ. ನಾನು ಯಾರಿಗೂ ತೀರ್ಪು ಮಾಡುವುದಿಲ್ಲ.</verse>
				<verse number="16">ನಾನು ತೀರ್ಪು ಮಾಡಿದರೂ ನನ್ನ ತೀರ್ಪು ಸತ್ಯವಾದದ್ದೇ. ಏಕೆಂದರೆ ನಾನು ಒಂಟಿಗನಲ್ಲ. ನಾನೂ ನನ್ನನ್ನು ಕಳುಹಿಸಿದ ತಂದೆಯೂ ಇದ್ದೇವೆ.</verse>
				<verse number="17">‘ಇಬ್ಬರ ಸಾಕ್ಷಿಯು ಸತ್ಯವಾದದ್ದು’ ಎಂದು ನಿಮ್ಮ ನಿಯಮದಲ್ಲಿಯೇ ಬರೆದಿದೆ.</verse>
				<verse number="18">ನನ್ನ ವಿಷಯವಾಗಿ ಸಾಕ್ಷಿ ನೀಡುವವನು ನಾನೇ ಮತ್ತು ನನ್ನನ್ನು ಕಳುಹಿಸಿದ ತಂದೆಯೂ ನನ್ನ ವಿಷಯವಾಗಿ ಸಾಕ್ಷಿ ನೀಡುತ್ತಾರೆ,” ಎಂದರು.</verse>
				<verse number="19">ಆಗ ಅವರು, “ನಿನ್ನ ತಂದೆ ಎಲ್ಲಿ?” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ನನ್ನನ್ನಾಗಲಿ ನನ್ನ ತಂದೆಯನ್ನಾಗಲಿ ತಿಳಿದಿಲ್ಲ, ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿಯುತ್ತಿದ್ದೀರಿ,” ಎಂದು ಉತ್ತರಕೊಟ್ಟರು.</verse>
				<verse number="20">ಯೇಸು ದೇವಾಲಯದ ಕಾಣಿಕೆ ಪೆಟ್ಟಿಗೆಗಳನ್ನಿಟ್ಟ ಸ್ಥಳದಲ್ಲಿ ಬೋಧಿಸುತ್ತಿದ್ದಾಗ ಈ ಮಾತುಗಳನ್ನು ಹೇಳಿದರು. ಆದರೆ ಯೇಸುವಿನ ಸಮಯ ಇನ್ನೂ ಬಾರದಿದ್ದ ಕಾರಣ ಯಾರೂ ಅವರನ್ನು ಬಂಧಿಸಲಿಲ್ಲ.</verse>
				<verse number="21">ಯೇಸು ತಿರುಗಿ ಅವರಿಗೆ, “ನಾನು ಹೊರಟುಹೋಗುತ್ತೇನೆ. ನೀವು ನನ್ನನ್ನು ಹುಡುಕುವಿರಿ ಮತ್ತು ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು.</verse>
				<verse number="22">ಅದಕ್ಕೆ ಯೆಹೂದ್ಯರು, “ಈತನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದಾನೋ? ಏಕೆಂದರೆ, ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ,’ ಎಂದು ಹೇಳುತ್ತಾನಲ್ಲಾ?” ಎಂದರು.</verse>
				<verse number="23">ಯೇಸು ಅವರಿಗೆ, “ನೀವು ಕೆಳಗಿನವರು, ನಾನು ಮೇಲಿನವನು. ನೀವು ಈ ಲೋಕದವರು, ನಾನು ಈ ಲೋಕದವನಲ್ಲ.</verse>
				<verse number="24">ಆದ್ದರಿಂದ, ‘ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,’ ಎಂದು ನಾನು ನಿಮಗೆ ಹೇಳಿದೆನು. ಏಕೆಂದರೆ ನೀವು ನನ್ನನ್ನು ನಂಬದೆ ಹೋದರೆ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ,” ಎಂದು ಹೇಳಿದರು.</verse>
				<verse number="25">ಅವರು ಯೇಸುವಿಗೆ, “ನೀನು ಯಾರು?” ಎಂದರು. ಅದಕ್ಕೆ ಯೇಸು ಅವರಿಗೆ, “ಮೊದಲಿನಿಂದ ನಾನು ನಿಮಗೆ ಹೇಳಿದಂತವನೇ.</verse>
				<verse number="26">ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ ತೀರ್ಪುಮಾಡುವುದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ನಾನು ಅವರಿಂದ ಕೇಳಿದವುಗಳನ್ನು ಮಾತ್ರವೇ ಲೋಕಕ್ಕೆ ಹೇಳುತ್ತೇನೆ,” ಎಂದರು.</verse>
				<verse number="27">ಯೇಸು ತಂದೆಯ ವಿಷಯವಾಗಿ ಅವರೊಂದಿಗೆ ಮಾತನಾಡಿದರೆಂದು ಅವರು ತಿಳಿಯಲಿಲ್ಲ.</verse>
				<verse number="28">ಯೇಸು ಅವರಿಗೆ, “ಮನುಷ್ಯಪುತ್ರನಾದ ನನ್ನನ್ನು ನೀವು ಮೇಲಕ್ಕೇರಿಸಿದಾಗ ‘ನಾನೇ ಆತನು’ ಎಂದು ನಿಮಗೆ ತಿಳಿಯುವುದು. ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ಬೋಧಿಸಿದಂತೆ ನಾನು ಈ ಸಂಗತಿಗಳನ್ನು ಮಾತನಾಡುತ್ತೇನೆ ಎಂದೂ ನೀವು ತಿಳಿದುಕೊಳ್ಳುವಿರಿ.</verse>
				<verse number="29">ನನ್ನನ್ನು ಕಳುಹಿಸಿದ ತಂದೆ ನನ್ನ ಸಂಗಡ ಇದ್ದಾರೆ. ಅವರು ನನ್ನನ್ನು ಒಬ್ಬಂಟಿಗನನ್ನಾಗಿ ಬಿಡಲಿಲ್ಲ, ಏಕೆಂದರೆ ಅವರಿಗೆ ಮೆಚ್ಚಿದವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ,” ಎಂದರು.</verse>
				<verse number="30">ಯೇಸು ಈ ಮಾತುಗಳನ್ನು ಹೇಳುತ್ತಿದ್ದಾಗಲೇ ಅನೇಕರು ಅವರಲ್ಲಿ ನಂಬಿಕೆಯಿಟ್ಟರು.</verse>
				<verse number="31">ಯೇಸು ತಮ್ಮನ್ನು ನಂಬಿದ್ದ ಯೆಹೂದ್ಯರಿಗೆ ಹೇಳಿದ್ದೇನೆಂದರೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾಗಿಯೂ ನೀವು ನನ್ನ ಶಿಷ್ಯರಾಗುವಿರಿ.</verse>
				<verse number="32">ಇದಲ್ಲದೆ ನೀವು ಸತ್ಯವನ್ನು ತಿಳಿದುಕೊಳ್ಳುವಿರಿ; ಸತ್ಯವು ನಿಮ್ಮನ್ನು ಸ್ವತಂತ್ರರಾಗಿ ಮಾಡುವುದು,” ಎಂದು ಹೇಳಿದರು.</verse>
				<verse number="33">ಅದಕ್ಕೆ ಅವರು ಯೇಸುವಿಗೆ, “ನಾವು ಅಬ್ರಹಾಮನ ಸಂತತಿಯವರು, ನಾವು ಯಾರಿಗೂ ಎಂದೂ ಗುಲಾಮರಾಗಿರಲಿಲ್ಲ. ನೀವು ಸ್ವತಂತ್ರರಾಗುವಿರಿ ಎಂದು ನೀನು ಹೇಳುವುದು ಹೇಗೆ?” ಎಂದು ಕೇಳಿದರು.</verse>
				<verse number="34">ಅದಕ್ಕೆ ಯೇಸು ಉತ್ತರವಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪಾಪ ಮಾಡುವವರು ಪಾಪಕ್ಕೆ ಗುಲಾಮರಾಗಿದ್ದಾರೆ.</verse>
				<verse number="35">ಗುಲಾಮರು ಕುಟುಂಬದಲ್ಲಿ ಶಾಶ್ವತವಾಗಿ ಇರುವುದಿಲ್ಲ. ಆದರೆ ಪುತ್ರನು ಶಾಶ್ವತವಾಗಿ ಇರುತ್ತಾನೆ.</verse>
				<verse number="36">ಆದ್ದರಿಂದ ದೇವಪುತ್ರನು ನಿಮ್ಮನ್ನು ಬಿಡುಗಡೆ ಮಾಡಿದರೆ, ನಿಜವಾಗಿ ನೀವು ಬಿಡುಗಡೆಯಾಗುವಿರಿ.</verse>
				<verse number="37">ನೀವು ಅಬ್ರಹಾಮನ ಸಂತತಿಯವರೆಂದು ನಾನು ಬಲ್ಲೆನು. ಆದರೆ ನಿಮ್ಮಲ್ಲಿ ನನ್ನ ವಾಕ್ಯಕ್ಕೆ ಸ್ಥಳವಿಲ್ಲದ ಕಾರಣ ನೀವು ನನ್ನನ್ನು ಕೊಲ್ಲಲು ಹುಡುಕುತ್ತೀರಿ.</verse>
				<verse number="38">ನಾನು ತಂದೆಯ ಬಳಿಯಲ್ಲಿ ಕಂಡದ್ದನ್ನೇ ಮಾತನಾಡುತ್ತೇನೆ. ನೀವಾದರೋ ನಿಮ್ಮ ತಂದೆಯಿಂದ ಕೇಳಿದ್ದನ್ನು ಮಾಡುತ್ತೀರಿ,” ಎಂದರು.</verse>
				<verse number="39">ಯೆಹೂದ್ಯರು ಯೇಸುವಿಗೆ, “ಅಬ್ರಹಾಮನು ನಮ್ಮ ತಂದೆ,” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನು ಮಾಡಿದ ಕ್ರಿಯೆಗಳನ್ನೇ ಮಾಡುತ್ತಿದ್ದಿರಿ.</verse>
				<verse number="40">ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲಲು ಪ್ರಯತ್ನಿಸುತ್ತೀರಿ. ಇಂತಹ ಕ್ರಿಯೆಗಳನ್ನು ಅಬ್ರಹಾಮನು ಮಾಡಲಿಲ್ಲ.</verse>
				<verse number="41">ನೀವು ನಿಮ್ಮ ತಂದೆಯ ಕ್ರಿಯೆಗಳನ್ನು ಮಾಡುತ್ತೀರಿ,” ಎಂದರು. ಅದಕ್ಕವರು, “ನಾವು ಅನೈತಿಕತೆಯಿಂದ ಹುಟ್ಟಿದವರಲ್ಲ. ನಮಗೆ ದೇವರೇ ತಂದೆ,” ಎಂದು ಪ್ರತಿಭಟಿಸಿದರು.</verse>
				<verse number="42">ಯೇಸು ಅವರಿಗೆ, “ದೇವರು ನಿಮ್ಮ ತಂದೆಯಾಗಿದ್ದರೆ ನೀವು ನನ್ನನ್ನು ಪ್ರೀತಿಸುತ್ತಿದ್ದಿರಿ. ಏಕೆಂದರೆ ನಾನು ದೇವರಿಂದ ಹೊರಟು ಬಂದಿದ್ದೇನೆ. ನಾನು ನನ್ನಷ್ಟಕ್ಕೆ ಬರಲಿಲ್ಲ. ಆದರೆ ದೇವರೇ ನನ್ನನ್ನು ಕಳುಹಿಸಿದ್ದು.</verse>
				<verse number="43">ನೀವು ನನ್ನ ಮಾತನ್ನು ಅರ್ಥಮಾಡಿಕೊಳ್ಳದಿರುವುದು ಯಾಕೆ? ನಾನು ಹೇಳುವುದನ್ನು ನೀವು ಕೇಳದೇ ಇರುವುದೇ ಇದಕ್ಕೆ ಕಾರಣ.</verse>
				<verse number="44">ನೀವು ನಿಮ್ಮ ತಂದೆಯಾದ ಪಿಶಾಚನಿಗೆ ಸೇರಿದವರಾಗಿದ್ದೀರಿ. ನಿಮ್ಮ ತಂದೆಯ ಆಶೆಗಳನ್ನೇ ನೀವು ಮಾಡಬಯಸುತ್ತೀರಿ. ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯದಲ್ಲಿ ನಿಲ್ಲಲಿಲ್ಲ. ಏಕೆಂದರೆ ಅವನಲ್ಲಿ ಸತ್ಯವೇ ಇಲ್ಲ. ಅವನು ಸುಳ್ಳಾಡುವಾಗ ತನ್ನ ಸ್ವಭಾವಾನುಸಾರವಾಗಿ ಆಡುತ್ತಾನೆ. ಅವನು ಸುಳ್ಳುಗಾರನೂ ಸುಳ್ಳಿನ ತಂದೆಯೂ ಆಗಿದ್ದಾನೆ.</verse>
				<verse number="45">ಆದರೆ ನಾನು ಸತ್ಯವನ್ನು ಹೇಳುವವನಾದ್ದರಿಂದ ನೀವು ನನ್ನನ್ನು ನಂಬುವುದಿಲ್ಲ.</verse>
				<verse number="46">ನನ್ನಲ್ಲಿ ಪಾಪವಿದೆಯೆಂದು ರುಜುವಾತು ಪಡಿಸುವವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಹೇಳುವುದಾದರೆ ನೀವು ನನ್ನನ್ನು ಏಕೆ ನಂಬುವುದಿಲ್ಲ?</verse>
				<verse number="47">ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲ. ಆದ್ದರಿಂದ ನೀವು ಕಿವಿಗೊಡುವುದಿಲ್ಲ,” ಎಂದು ಹೇಳಿದರು.</verse>
				<verse number="48">ಅದಕ್ಕೆ ಯೆಹೂದಿ ನಾಯಕರು ಯೇಸುವಿಗೆ, “ನೀನು ಸಮಾರ್ಯದವನು ಮತ್ತು ನಿನಗೆ ದೆವ್ವ ಹಿಡಿದಿದೆ ಎಂದು ನಾವು ಹೇಳುವುದು ಸರಿಯಲ್ಲವೇ?” ಎಂದು ಕೇಳಿದರು.</verse>
				<verse number="49">ಅದಕ್ಕೆ ಯೇಸು, “ನನಗೆ ದೆವ್ವ ಹಿಡಿದಿಲ್ಲ. ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ. ನೀವು ನನ್ನನ್ನು ಅವಮಾನಪಡಿಸುತ್ತೀರಿ.</verse>
				<verse number="50">ನಾನು ನನ್ನ ಮಹಿಮೆಯನ್ನು ಹುಡುಕುವುದಿಲ್ಲ. ನನಗೆ ಮಹಿಮೆಯನ್ನು ಹುಡುಕುವವರು ಒಬ್ಬರಿದ್ದಾರೆ ಅವರೇ ನ್ಯಾಯತೀರಿಸುವವರು.</verse>
				<verse number="51">ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾರು ನನ್ನ ಮಾತನ್ನು ಪಾಲಿಸುತ್ತಾರೋ ಅವರು ಎಂದೆಂದಿಗೂ ಮರಣವನ್ನು ಕಾಣುವುದಿಲ್ಲ,” ಎಂದರು.</verse>
				<verse number="52">ಆಗ ಯೆಹೂದಿ ನಾಯಕರು ಯೇಸುವಿಗೆ, “ನಿನಗೆ ದೆವ್ವ ಹಿಡಿದಿದೆ ಎಂದು ನಮಗೆ ಈಗ ತಿಳಿಯಿತು. ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು. ಆದರೆ, ‘ಯಾರಾದರೂ ನನ್ನ ಮಾತನ್ನು ಪಾಲಿಸಿದರೆ ಅವರು ಎಂದೆಂದಿಗೂ ಮರಣ ಹೊಂದುವುದಿಲ್ಲ,’ ಎಂದು ನೀನು ಹೇಳುತ್ತೀಯಲ್ಲಾ?</verse>
				<verse number="53">ಸತ್ತು ಹೋದ ನಮ್ಮ ತಂದೆ ಅಬ್ರಹಾಮನಿಗಿಂತಲೂ ನೀನು ದೊಡ್ಡವನೋ? ಪ್ರವಾದಿಗಳೂ ಸತ್ತುಹೋದರು. ನೀನು ನಿನ್ನನ್ನು ಯಾರನ್ನಾಗಿ ಮಾಡಿಕೊಂಡಿರುವೆ?” ಎಂದು ಕೇಳಿದರು.</verse>
				<verse number="54">ಯೇಸು, “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನೀವು ಯಾರನ್ನು, ‘ಅವರೇ ನಮ್ಮ ದೇವರು’ ಎಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಮಹಿಮೆ ಪಡಿಸುವವರು.</verse>
				<verse number="55">ನೀವು ಅವರನ್ನು ಅರಿತುಕೊಂಡಿಲ್ಲ; ಆದರೆ ನಾನು ಅವರನ್ನು ಅರಿತಿದ್ದೇನೆ. ನಾನು ಅವರನ್ನು ಅರಿಯಲಿಲ್ಲವೆಂದು ಹೇಳಿದರೆ ನಿಮ್ಮ ಹಾಗೆ ನಾನೂ ಸುಳ್ಳುಗಾರನಾಗುವೆನು. ಆದರೆ ನಾನು ಅವರನ್ನು ಅರಿತಿದ್ದೇನೆ. ಅವರ ಮಾತನ್ನು ಪಾಲಿಸುತ್ತೇನೆ.</verse>
				<verse number="56">ನಿಮ್ಮ ತಂದೆ ಅಬ್ರಹಾಮನು ನನ್ನ ದಿನವನ್ನು ಕಾಣುವನೆಂದು ಆನಂದಿಸಿದನು ಮತ್ತು ಅದನ್ನು ಕಂಡು ಉಲ್ಲಾಸಪಟ್ಟನು,” ಎಂದು ಹೇಳಿದರು.</verse>
				<verse number="57">ಆಗ ಯೆಹೂದಿ ನಾಯಕರು ಯೇಸುವಿಗೆ, “ನಿನಗೆ ಇನ್ನೂ ಐವತ್ತು ವರ್ಷವಾಗಿಲ್ಲ, ನೀನು ಅಬ್ರಹಾಮನನ್ನು ಕಂಡಿದ್ದೀಯಾ?” ಎಂದರು.</verse>
				<verse number="58">ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚೆಯೇ ನಾನು ಇದ್ದೇನೆ,” ಎಂದರು.</verse>
				<verse number="59">ಆಗ ಅವರು ಯೇಸುವಿನ ಮೇಲೆ ಎಸೆಯಲು ಕಲ್ಲುಗಳನ್ನು ಎತ್ತಿಕೊಂಡರು. ಆದರೆ ಯೇಸು ಅಡಗಿಕೊಂಡು ದೇವಾಲಯದೊಳಗಿಂದ ಹೊರಟು ಹೋದರು.</verse>
			</chapter>
			<chapter number="9">
				<verse number="1">ಯೇಸು ನಡೆದು ಹೋಗುತ್ತಿದ್ದಾಗ, ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನನ್ನು ಕಂಡರು.</verse>
				<verse number="2">ಯೇಸುವಿನ ಶಿಷ್ಯರು, “ಬೋಧಕರೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಈ ಮನುಷ್ಯನ ಪಾಪದಿಂದಲೋ ಇವನ ತಂದೆತಾಯಿಗಳ ಪಾಪದಿಂದಲೋ?” ಎಂದು ಅವರನ್ನು ಕೇಳಿದರು.</verse>
				<verse number="3">ಯೇಸು, “ಈ ಮನುಷ್ಯನಾಗಲಿ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ. ಆದರೆ ದೇವರ ಕ್ರಿಯೆಗಳು ಇವನಲ್ಲಿ ವ್ಯಕ್ತವಾಗುವಂತೆ ಹೀಗಾಯಿತು.</verse>
				<verse number="4">ನನ್ನನ್ನು ಕಳುಹಿಸಿದ ತಂದೆಯ ಕೆಲಸಗಳನ್ನು ಹಗಲಿರುವಾಗಲೇ ನಾವು ಮಾಡಬೇಕು. ರಾತ್ರಿ ಬಂದಾಗ ಯಾರಿಗೂ ಕೆಲಸ ಮಾಡಲಾಗದು.</verse>
				<verse number="5">ನಾನು ಈ ಲೋಕದಲ್ಲಿರುವಾಗ ಲೋಕದ ಬೆಳಕಾಗಿದ್ದೇನೆ,” ಎಂದರು.</verse>
				<verse number="6">ಯೇಸು ಹೀಗೆ ಹೇಳಿ ನೆಲದ ಮೇಲೆ ಉಗುಳಿ ಆ ಉಗುಳಿನಿಂದ ಮಣ್ಣಿನ ಲೇಪಮಾಡಿ ಆ ಲೇಪವನ್ನು ಅವನ ಕಣ್ಣುಗಳಿಗೆ ಹಚ್ಚಿದರು.</verse>
				<verse number="7">ಅವನಿಗೆ, “ಹೋಗು, ಸಿಲೋವ ಕೊಳದಲ್ಲಿ ತೊಳೆದುಕೋ,” ಎಂದರು. ಸಿಲೋವ ಎಂದರೆ, “ಕಳುಹಿಸಲಾದವನು” ಎಂದರ್ಥ. ಕುರುಡನು ಹೋಗಿ ಕಣ್ಣು ತೊಳೆದುಕೊಂಡು ದೃಷ್ಟಿಹೊಂದಿದವನಾಗಿ ಬಂದನು.</verse>
				<verse number="8">ಆಗ ನೆರೆಯವರು ಮತ್ತು ಮೊದಲು ಭಿಕ್ಷುಕನಾಗಿದ್ದಾಗ ಅವನನ್ನು ಕಂಡವರು, “ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೇ?” ಎಂದರು.</verse>
				<verse number="9">ಕೆಲವರು, “ಹೌದು, ಇವನೇ,” ಎಂದರು. ಇನ್ನೂ ಬೇರೆಯವರು, “ಇಲ್ಲಾ, ಇವನು ಅವನ ಹಾಗೆ ಇದ್ದಾನೆ,” ಎಂದರು. ಅವನಾದರೋ, “ನಾನೇ ಅವನು,” ಎಂದು ಹೇಳಿದನು.</verse>
				<verse number="10">ಕೆಲವರು ಅವನಿಗೆ, “ಹಾಗಾದರೆ ನಿನಗೆ ದೃಷ್ಟಿ ಹೇಗೆ ಬಂತು?” ಎಂದು ಕೇಳಲು,</verse>
				<verse number="11">ಅವನು, “ಯೇಸು ಎಂಬ ಹೆಸರುಳ್ಳ ಮನುಷ್ಯನು ಮಣ್ಣಿನ ಲೇಪಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ, ‘ಸಿಲೋವ ಕೊಳಕ್ಕೆ ಹೋಗಿ ತೊಳೆದುಕೋ,’ ಎಂದನು. ಅದರಂತೆ ನಾನು ಹೋಗಿ ತೊಳೆದುಕೊಂಡೆನು, ನನಗೆ ದೃಷ್ಟಿ ಬಂತು,” ಎಂದನು.</verse>
				<verse number="12">ಅವರು ಅವನಿಗೆ, “ಆತನು ಎಲ್ಲಿದ್ದಾನೆ?” ಎಂದು ಕೇಳಲು, ಅವನು, “ನನಗೆ ಗೊತ್ತಿಲ್ಲ,” ಎಂದನು.</verse>
				<verse number="13">ಜನರು ಮೊದಲು ಕುರುಡನಾಗಿದ್ದವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಬಂದರು.</verse>
				<verse number="14">ಯೇಸು ಮಣ್ಣಿನ ಲೇಪಮಾಡಿ ಅವನಿಗೆ ದೃಷ್ಟಿಕೊಟ್ಟ ದಿನವು ಯೆಹೂದ್ಯರ ಸಬ್ಬತ್ ದಿನವಾಗಿತ್ತು.</verse>
				<verse number="15">ಆದ್ದರಿಂದ ಫರಿಸಾಯರು ಅವನಿಗೆ, ಹೇಗೆ ದೃಷ್ಟಿ ಬಂತು ಎಂದು ತಿರುಗಿ ಅವನನ್ನು ಕೇಳಲು, ಅವನು ಅವರಿಗೆ, “ಯೇಸು ಮಣ್ಣಿನ ಲೇಪವನ್ನು ನನ್ನ ಕಣ್ಣುಗಳ ಮೇಲಿಡಲು ನಾನು ತೊಳೆದುಕೊಂಡೆನು. ಈಗ ನೋಡುತ್ತೇನೆ,” ಎಂದನು.</verse>
				<verse number="16">ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ. ಏಕೆಂದರೆ ಆತನು ಯೆಹೂದ್ಯರ ಸಬ್ಬತ್ ದಿನವನ್ನು ಕೈಗೊಳ್ಳುವುದಿಲ್ಲ,” ಎಂದರು. ಬೇರೆ ಕೆಲವರು, “ಹಾಗಾದರೆ ಪಾಪಿಯಾದ ಮನುಷ್ಯನು ಇಂಥ ಸೂಚಕಕಾರ್ಯಗಳನ್ನು ಮಾಡುವುದು ಹೇಗೆ?” ಎಂದರು. ಹೀಗೆ ಅವರಲ್ಲಿ ಭೇದ ಉಂಟಾಯಿತು.</verse>
				<verse number="17">ಅವರು ತಿರುಗಿ, “ಆತನು ನಿನಗೆ ದೃಷ್ಟಿಕೊಟ್ಟದ್ದರಿಂದ ಆತನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದಾಗ, ಅವನು, “ಅವರು ಒಬ್ಬ ಪ್ರವಾದಿ,” ಎಂದನು.</verse>
				<verse number="18">ದೃಷ್ಟಿಹೊಂದಿದವನ ತಂದೆತಾಯಿಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ, ಅವನು ಕುರುಡನಾಗಿದ್ದು ದೃಷ್ಟಿಹೊಂದಿದನೆಂದು ನಂಬಲಿಲ್ಲ.</verse>
				<verse number="19">ಅವರು, “ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಇವನಿಗೆ ಕಣ್ಣು ಕಾಣುವುದು ಹೇಗೆ?” ಎಂದು ಅವರನ್ನು ಕೇಳಿದರು.</verse>
				<verse number="20">ಅವನ ತಂದೆತಾಯಿಗಳು ಅವರಿಗೆ, “ಇವನು ನಮ್ಮ ಮಗನೆಂದೂ ಇವನು ಕುರುಡನಾಗಿ ಹುಟ್ಟಿದನೆಂದೂ ನಾವು ಬಲ್ಲೆವು.</verse>
				<verse number="21">ಆದರೆ ಇವನಿಗೆ ಈಗ ಕಣ್ಣು ಕಾಣುವುದು ಹೇಗೆಂದು ನಮಗೆ ಗೊತ್ತಿಲ್ಲ. ಯಾರು ಇವನ ಕಣ್ಣುಗಳನ್ನು ತೆರೆದರೆಂದೂ ನಮಗೆ ಗೊತ್ತಿಲ್ಲ, ಇವನನ್ನೇ ಕೇಳಿರಿ; ಇವನು ಪ್ರಾಯದವನಾಗಿದ್ದಾನೆ. ಇವನೇ ತನ್ನ ವಿಷಯವಾಗಿ ಮಾತನಾಡುವನು,” ಎಂದು ಹೇಳಿದರು.</verse>
				<verse number="22">ಅವನ ತಂದೆತಾಯಿಗಳು ಯೆಹೂದ್ಯ ನಾಯಕರಿಗೆ ಭಯಪಟ್ಟಿದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ, ಅವರನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯ ನಾಯಕರು ಈ ಮೊದಲೇ ಗೊತ್ತುಮಾಡಿದ್ದರು.</verse>
				<verse number="23">ಆದ್ದರಿಂದ ಅವನ ತಂದೆತಾಯಿಗಳು, “ಇವನು ಪ್ರಾಯದವನಾಗಿದ್ದಾನೆ, ಇವನನ್ನೇ ಕೇಳಿ,” ಎಂದು ಹೇಳಿದರು.</verse>
				<verse number="24">ಅವರು ಕುರುಡನಾಗಿದ್ದವನನ್ನು ಮತ್ತೊಮ್ಮೆ ಕರೆದು ಅವನಿಗೆ, “ದೇವರಿಗೆ ಮಹಿಮೆಯನ್ನು ಸಲ್ಲಿಸು, ಆ ಮನುಷ್ಯ ಪಾಪಿ ಎಂದು ನಾವು ಬಲ್ಲೆವು,” ಎಂದರು.</verse>
				<verse number="25">ಅದಕ್ಕೆ ಅವನು, “ಅವರು ಪಾಪಿಯೋ ಏನೋ ನನಗೆ ಗೊತ್ತಿಲ್ಲ. ಒಂದು ಮಾತ್ರ ಬಲ್ಲೆ, ನಾನು ಕುರುಡನಾಗಿದ್ದೆನು; ಈಗ ನನಗೆ ಕಾಣುತ್ತದೆ,” ಎಂದು ಉತ್ತರಕೊಟ್ಟನು.</verse>
				<verse number="26">ಆದ್ದರಿಂದ ಅವರು ಅವನಿಗೆ, “ಆತನು ನಿನಗೆ ಏನು ಮಾಡಿದನು? ಆತನು ನಿನ್ನ ಕಣ್ಣುಗಳನ್ನು ಹೇಗೆ ತೆರೆದನು?” ಎಂದು ಕೇಳಿದ್ದಕ್ಕೆ,</verse>
				<verse number="27">ಅವನು ಉತ್ತರವಾಗಿ, “ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ. ಆದರೆ ನೀವು ಕೇಳಲಿಲ್ಲ, ನೀವು ತಿರುಗಿ ಏಕೆ ಕೇಳುತ್ತೀರಿ? ನೀವು ಸಹ ಅವರ ಶಿಷ್ಯರಾಗುವುದಕ್ಕೆ ಬಯಸುತ್ತೀರೋ?” ಎಂದನು.</verse>
				<verse number="28">ಆಗ ಅವರು ಅವನನ್ನು ದೂಷಿಸಿ, “ನೀನು ಆತನ ಶಿಷ್ಯನು. ಆದರೆ ನಾವು ಮೋಶೆಯ ಶಿಷ್ಯರು.</verse>
				<verse number="29">ಮೋಶೆಯ ಮೂಲಕ ದೇವರು ಮಾತನಾಡಿದನೆಂದು ನಾವು ಬಲ್ಲೆವು. ಆದರೆ ಈತನು ಎಲ್ಲಿಂದ ಬಂದನೋ ನಮಗೆ ಗೊತ್ತಿಲ್ಲ,” ಎಂದರು.</verse>
				<verse number="30">ಅದಕ್ಕೆ ಅವನು ಅವರಿಗೆ, “ಏನಾಶ್ಚರ್ಯ! ಅವರು ನನ್ನ ಕಣ್ಣುಗಳನ್ನು ತೆರೆದರೂ ಅವರು ಎಲ್ಲಿಂದ ಬಂದವನೆಂದು ನಿಮಗೆ ತಿಳಿಯದೆ ಇರುವುದು.</verse>
				<verse number="31">ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲ; ಆದರೆ ಯಾರು ದೇವರಿಗೆ ಭಯಪಡುವವರಾಗಿದ್ದು ಅವರ ಚಿತ್ತದಂತೆ ನಡೆಯುತ್ತಾರೋ, ಅಂಥವರಿಗೆ ಕಿವಿಗೊಡುತ್ತಾರೆಂದು ನಾವು ಬಲ್ಲೆವು.</verse>
				<verse number="32">ಹುಟ್ಟುಕುರುಡನಾಗಿದ್ದ ಒಬ್ಬ ಮನುಷ್ಯನ ಕಣ್ಣುಗಳನ್ನು ಯಾರಾದರೂ ತೆರೆದಿದ್ದನ್ನು ಎಂದಿಗೂ ಒಬ್ಬರೂ ಕೇಳಿಲ್ಲ.</verse>
				<verse number="33">ಅವರು ದೇವರಿಂದ ಬಂದವರಲ್ಲದಿದ್ದರೆ ಅವರಿಂದ ಏನೂ ಮಾಡಲಾಗುತ್ತಿರಲಿಲ್ಲ,” ಎಂದನು.</verse>
				<verse number="34">ಅದಕ್ಕೆ ಅವರು, “ನೀನು ಪಾಪದಲ್ಲಿಯೇ ಪೂರ್ಣವಾಗಿ ಹುಟ್ಟಿದವನು. ನೀನು ನಮಗೆ ಬೋಧಿಸುತ್ತೀಯಾ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.</verse>
				<verse number="35">ಯೆಹೂದಿ ನಾಯಕರು ಅವನನ್ನು ಸಭಾಮಂದಿರದಿಂದ ಹೊರಗೆ ಹಾಕಿದ್ದನ್ನು ಯೇಸು ಕೇಳಿ, ಅವನನ್ನು ಕಂಡು, “ನೀನು ಮನುಷ್ಯಪುತ್ರನನ್ನು ನಂಬುತ್ತೀಯಾ?” ಎಂದರು.</verse>
				<verse number="36">ಅದಕ್ಕೆ ಅವನು, “ಸ್ವಾಮೀ, ನಾನು ಅವರನ್ನು ನಂಬುವಂತೆ ಅವರು ಯಾರೆಂದು ತಿಳಿಸಿರಿ,” ಎಂದನು.</verse>
				<verse number="37">ಯೇಸು ಅವನಿಗೆ, “ನೀನು ಆತನನ್ನು ಕಂಡಿದ್ದೀ ಮತ್ತು ನಿನ್ನ ಸಂಗಡ ಮಾತನಾಡುತ್ತಿರುವ ನಾನೇ ಆತನು,” ಎಂದು ಹೇಳಿದರು.</verse>
				<verse number="38">ಆಗ ಅವನು, “ಸ್ವಾಮೀ, ನಾನು ನಂಬುತ್ತೇನೆ,” ಎಂದು ಹೇಳಿ ಯೇಸುವಿಗೆ ಅಡ್ಡಬಿದ್ದನು.</verse>
				<verse number="39">ಯೇಸು, “ಕುರುಡರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನಾನು ನ್ಯಾಯತೀರ್ಪು ಮಾಡುವುದಕ್ಕಾಗಿ ಈ ಲೋಕಕ್ಕೆ ಬಂದಿದ್ದೇನೆ,” ಎಂದರು.</verse>
				<verse number="40">ಯೇಸುವಿನೊಂದಿಗಿದ್ದ ಫರಿಸಾಯರಲ್ಲಿ ಕೆಲವರು ಈ ಮಾತುಗಳನ್ನು ಕೇಳಿ, “ನಾವು ಸಹ ಕುರುಡರೋ?” ಎಂದು ಯೇಸುವನ್ನು ಪ್ರಶ್ನಿಸಿದರು.</verse>
				<verse number="41">ಅದಕ್ಕೆ ಯೇಸು ಅವರಿಗೆ, “ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ, ‘ನಮಗೆ ಕಾಣುತ್ತದೆ,’ ಎಂದು ನೀವು ಹೇಳುವುದರಿಂದ ನಿಮ್ಮ ಪಾಪವು ನಿಮಗೆ ಉಳಿದಿದೆ,” ಎಂದರು.</verse>
			</chapter>
			<chapter number="10">
				<verse number="1">“ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಬಾಗಿಲಿನಿಂದ ಕುರಿಹಟ್ಟಿಯೊಳಗೆ ಬಾರದೆ ಬೇರೆ ಎಲ್ಲಿಂದಾದರೂ ಒಳಗೆ ಬರುವವನು ಕಳ್ಳನೂ ದರೋಡೆಕೋರನೂ ಆಗಿದ್ದಾನೆ.</verse>
				<verse number="2">ಆದರೆ ಬಾಗಿಲಿನ ಮೂಲಕ ಪ್ರವೇಶಿಸುವವನೇ ಆ ಕುರಿಗಳ ಕುರುಬನು.</verse>
				<verse number="3">ಬಾಗಿಲು ಕಾಯುವವನು ಅವನಿಗೆ ಬಾಗಿಲನ್ನು ತೆರೆಯುತ್ತಾನೆ. ಕುರಿಗಳು ಅವನ ಸ್ವರವನ್ನು ಕೇಳುತ್ತವೆ. ಅವನು ತನ್ನ ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಅವುಗಳನ್ನು ಹೊರಗೆ ಬಿಡುತ್ತಾನೆ.</verse>
				<verse number="4">ಅವನು ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಸ್ವರವನ್ನು ತಿಳಿದಿರುವುದರಿಂದ ಅವನನ್ನು ಹಿಂಬಾಲಿಸುತ್ತವೆ.</verse>
				<verse number="5">ಆದರೆ ಅವು ಅಪರಿಚಿತನನ್ನು ಹಿಂಬಾಲಿಸದೇ ಅವನ ಬಳಿಯಿಂದ ಓಡಿಹೋಗುವವು. ಏಕೆಂದರೆ ಅವು ಅಪರಿಚಿತನ ಸ್ವರವನ್ನು ಗುರುತಿಸುವುದಿಲ್ಲ,” ಎಂದರು.</verse>
				<verse number="6">ಯೇಸು ಈ ಸಾಮ್ಯವನ್ನು ಅವರಿಗೆ ಹೇಳಿದರು. ಆದರೂ ಯೇಸು ಅವರ ಸಂಗಡ ಮಾತನಾಡಿದ ವಿಷಯಗಳು ಏನಾಗಿದ್ದವು ಎಂದು ಫರಿಸಾಯರು ಗ್ರಹಿಸಲಿಲ್ಲ.</verse>
				<verse number="7">ಯೇಸು ತಿರುಗಿ ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗಿಲಾಗಿದ್ದೇನೆ.</verse>
				<verse number="8">ನನಗಿಂತ ಮೊದಲು ಬಂದವರೆಲ್ಲರು ಕಳ್ಳರೂ ದರೋಡೆಕೋರರೂ ಆಗಿದ್ದಾರೆ. ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.</verse>
				<verse number="9">ನಾನೇ ಬಾಗಿಲು; ನನ್ನ ಮೂಲಕವಾಗಿ ಯಾರು ಪ್ರವೇಶಿಸುವರೋ ಅವರೇ ಸುರಕ್ಷಿತವಾಗಿರುವರು. ಇದಲ್ಲದೆ ಅವರು ಒಳಗೆ ಹೋಗುವರು, ಹೊರಗೆ ಬರುವರು ಮತ್ತು ಮೇವನ್ನು ಕಂಡುಕೊಳ್ಳುವರು.</verse>
				<verse number="10">ಕಳ್ಳನು ಕದಿಯಲು, ಕೊಯ್ಯಲು ಮತ್ತು ನಾಶಮಾಡಲು ಮಾತ್ರ ಬರುತ್ತಾನೆ. ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿರಬೇಕೆಂತಲೂ ಬಂದೆನು.</verse>
				<verse number="11">“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.</verse>
				<verse number="12">ಕೂಲಿಯಾಳು ಕುರಿಗಳ ಕುರುಬನಲ್ಲ; ಅವನು ತೋಳ ಬರುವುದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ಆಗ ತೋಳವು ಕುರಿಗಳನ್ನು ಹಿಡಿದುಕೊಂಡು ಹಿಂಡನ್ನು ಚದರಿಸುತ್ತದೆ.</verse>
				<verse number="13">ಅವನು ಕೇವಲ ಕೂಲಿಯಾಳು ಆಗಿರುವುದರಿಂದ ಅವನಿಗೆ ಕುರಿಗಳ ಚಿಂತೆಯಿಲ್ಲ.</verse>
				<verse number="14">“ನಾನೇ ಒಳ್ಳೆಯ ಕುರುಬನು. ನನ್ನ ಕುರಿಗಳನ್ನು ನಾನು ತಿಳಿದಿದ್ದೇನೆ. ನನ್ನ ಕುರಿಗಳು ನನ್ನನ್ನು ತಿಳಿದಿವೆ.</verse>
				<verse number="15">ತಂದೆಯು ನನ್ನನ್ನು ತಿಳಿದಿರುವಂತೆ ನಾನು ತಂದೆಯನ್ನು ತಿಳಿದಿರುತ್ತೇನೆ; ನಾನು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನೇ ಕೊಡುತ್ತೇನೆ.</verse>
				<verse number="16">ಈ ಹಿಂಡಿಗೆ ಸೇರದ ಬೇರೆ ಕುರಿಗಳು ನನಗಿವೆ. ಅವುಗಳನ್ನೂ ಸಹ ನಾನು ತರಬೇಕಾಗಿದೆ. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಹಿಂಡೂ ಒಬ್ಬನೇ ಕುರುಬನೂ ಆಗಿರುವುದು.</verse>
				<verse number="17">ಮರಳಿ ಪಡೆಯುವಂತೆ ನನ್ನ ಪ್ರಾಣವನ್ನು ನಾನು ಕೊಡುವುದರಿಂದ ನನ್ನ ತಂದೆಯು ನನ್ನನ್ನು ಪ್ರೀತಿಸುತ್ತಾರೆ.</verse>
				<verse number="18">ಯಾರೂ ನನ್ನ ಪ್ರಾಣವನ್ನು ನನ್ನಿಂದ ತೆಗೆಯುವುದಿಲ್ಲ. ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುವೆನು. ನಾನು ಅದನ್ನು ಕೊಡುವುದಕ್ಕೆ ನನಗೆ ಅಧಿಕಾರವಿದೆ. ಅದನ್ನು ಪುನಃ ತೆಗೆದುಕೊಳ್ಳುವುದಕ್ಕೂ ನನಗೆ ಅಧಿಕಾರವಿದೆ. ಈ ಆಜ್ಞೆಯನ್ನು ನಾನು ನನ್ನ ತಂದೆಯಿಂದ ಪಡೆದಿದ್ದೇನೆ,” ಎಂದರು.</verse>
				<verse number="19">ಈ ಮಾತುಗಳ ದೆಸೆಯಿಂದ ಯೆಹೂದ್ಯರ ಮಧ್ಯದಲ್ಲಿ ಮತ್ತೆ ಭೇದ ಉಂಟಾಯಿತು.</verse>
				<verse number="20">ಅವರಲ್ಲಿ ಅನೇಕರು, “ಆತನಿಗೆ ದೆವ್ವ ಹಿಡಿದಿದೆ. ಆತನು ಹುಚ್ಚನಾಗಿದ್ದಾನೆ, ನೀವು ಏಕೆ ಆತನಿಗೆ ಕಿವಿಗೊಡುತ್ತೀರಿ?” ಎಂದರು.</verse>
				<verse number="21">ಇನ್ನು ಕೆಲವರು, “ಇವು ದೆವ್ವ ಹಿಡಿದವನ ಮಾತುಗಳಲ್ಲ. ದೆವ್ವವು ಕುರುಡನ ಕಣ್ಣುಗಳನ್ನು ತೆರೆಯಲು ಸಾಧ್ಯವೇ?” ಎಂದರು.</verse>
				<verse number="22">ಆಗ ಯೆರೂಸಲೇಮಿನಲ್ಲಿ ದೇವಾಲಯದ ಪ್ರತಿಷ್ಠೆಯ ಹಬ್ಬವಿತ್ತು. ಅದು ಚಳಿಗಾಲವಾಗಿತ್ತು.</verse>
				<verse number="23">ಯೇಸು ದೇವಾಲಯದೊಳಗೆ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಿದ್ದರು.</verse>
				<verse number="24">ಆಗ ಯೆಹೂದ್ಯರು ಯೇಸುವನ್ನು ಸುತ್ತುವರೆದು, “ಇನ್ನೆಷ್ಟು ಕಾಲ ನಮ್ಮನ್ನು ಸಂಶಯದಲ್ಲಿರಿಸುವೆ? ನೀನು ಕ್ರಿಸ್ತನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು,” ಎಂದರು.</verse>
				<verse number="25">ಯೇಸು ಅವರಿಗೆ, “ನಾನು ನಿಮಗೆ ಹೇಳಿದೆನು. ಆದರೆ ನೀವು ನಂಬುತ್ತಾ ಇಲ್ಲ. ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿ ಕೊಡುತ್ತವೆ.</verse>
				<verse number="26">ನೀವು ನನ್ನ ಕುರಿಗಳಲ್ಲ, ಆದ್ದರಿಂದಲೇ ನೀವು ನಂಬುವುದಿಲ್ಲ.</verse>
				<verse number="27">ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ನಾನು ಅವುಗಳನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.</verse>
				<verse number="28">ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದೆಂದಿಗೂ ನಾಶವಾಗುವುದಿಲ್ಲ. ಅವುಗಳನ್ನು ಯಾರೂ ನನ್ನ ಕೈಯಿಂದ ಕಸಿದುಕೊಳ್ಳಲಾರರು.</verse>
				<verse number="29">ಅವುಗಳನ್ನು ನನಗೆ ಕೊಟ್ಟ ನನ್ನ ತಂದೆ ಎಲ್ಲರಿಗಿಂತಲೂ ಮಹೋನ್ನತರು. ನನ್ನ ತಂದೆಯ ಕೈಯಿಂದ ಅವುಗಳನ್ನು ಯಾರೂ ಕಸಿದುಕೊಳ್ಳಲಾರರು.</verse>
				<verse number="30">ನಾನು ಮತ್ತು ನನ್ನ ತಂದೆ ಒಂದೇ ಆಗಿದ್ದೇವೆ,” ಎಂದು ಉತ್ತರಕೊಟ್ಟರು.</verse>
				<verse number="31">ಆಗ ಯೆಹೂದಿ ನಾಯಕರು ಪುನಃ ಯೇಸುವಿನ ಮೇಲೆ ಕಲ್ಲೆಸೆಯಲು ಕಲ್ಲುಗಳನ್ನು ಎತ್ತಿಕೊಂಡರು.</verse>
				<verse number="32">ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ನಾನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕಾರ್ಯಕ್ಕಾಗಿ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದರು.</verse>
				<verse number="33">ಅದಕ್ಕೆ ಯೆಹೂದ್ಯರು ಯೇಸುವಿಗೆ, “ಒಳ್ಳೆಯ ಕಾರ್ಯಗಳಿಗಾಗಿಯಲ್ಲ. ನೀನು ಮನುಷ್ಯನಾಗಿದ್ದು ನಿನ್ನನ್ನೇ ದೇವರನ್ನಾಗಿ ಮಾಡಿಕೊಂಡದ್ದಕ್ಕೂ ದೇವದೂಷಣೆ ಮಾಡುತ್ತಿರುವದಕ್ಕೂ ನಾವು ನಿನ್ನ ಮೇಲೆ ಕಲ್ಲೆಸೆಯುತ್ತೇವೆ,” ಎಂದು ಉತ್ತರಕೊಟ್ಟರು.</verse>
				<verse number="34">ಅದಕ್ಕೆ ಯೇಸು, “ ‘ನೀವು ದೇವರುಗಳು,’ ಎಂದು ದೇವರೇ ಹೇಳಿರುವುದಾಗಿ ನಿಮ್ಮ ನಿಯಮದಲ್ಲಿ ಬರೆದಿಲ್ಲವೋ?</verse>
				<verse number="35">ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಆತನು ಕರೆದಿರುವುದಾದರೆ, ಪವಿತ್ರ ವೇದವು ಸುಳ್ಳಾಗಲಾರದು.</verse>
				<verse number="36">ಹೀಗಿರುವಾಗ ತಂದೆಯು ಪ್ರತಿಷ್ಠಿಸಿ ನನ್ನನ್ನು ಲೋಕಕ್ಕೆ ಕಳುಹಿಸಿಕೊಟ್ಟಿರುವ ನಾನು, ‘ದೇವರ ಪುತ್ರನಾಗಿದ್ದೇನೆ,’ ಎಂದು ಹೇಳಿದ್ದಕ್ಕೆ, ‘ನೀನು ದೇವದೂಷಣೆ ಮಾಡುತ್ತೀ,’ ಎಂದು ನೀವು ನನಗೆ ಹೇಳುತ್ತೀರಲ್ಲಾ?</verse>
				<verse number="37">ನನ್ನ ತಂದೆಯ ಕಾರ್ಯಗಳನ್ನು ನಾನು ಮಾಡದಿದ್ದರೆ ನನ್ನನ್ನು ನಂಬಬೇಡಿರಿ.</verse>
				<verse number="38">ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದಿದ್ದರೂ ಈ ಕಾರ್ಯಗಳನ್ನಾದರೂ ನಂಬಿರಿ. ಆಗ ತಂದೆಯು ನನ್ನಲ್ಲಿಯೂ ನಾನು ತಂದೆಯಲ್ಲಿಯೂ ಇರುವುದು ನಿಮಗೆ ಗೊತ್ತಾಗುವುದು ಹಾಗೂ ಮನದಟ್ಟಾಗುವುದು,” ಎಂದರು.</verse>
				<verse number="39">ತಿರುಗಿ ಅವರು ಯೇಸುವನ್ನು ಬಂಧಿಸಲು ಪ್ರಯತ್ನಿಸಿದರು. ಆದರೆ ಯೇಸು ಅವರ ಕೈಯಿಂದ ತಪ್ಪಿಸಿಕೊಂಡು ಹೋದರು.</verse>
				<verse number="40">ಆಮೇಲೆ ಯೇಸು ಯೊರ್ದನ್ ನದಿಯನ್ನು ದಾಟಿ ಯೋಹಾನನು ಮೊದಲು ದೀಕ್ಷಾಸ್ನಾನ ಮಾಡಿಸುತ್ತಿದ್ದ ಸ್ಥಳಕ್ಕೆ ಬಂದು, ಅಲ್ಲಿಯೇ ವಾಸಮಾಡಿದರು.</verse>
				<verse number="41">ಆಗ ಅನೇಕರು ಯೇಸುವಿನ ಬಳಿಗೆ ಬಂದು, “ಯೋಹಾನನು ಯಾವುದೇ ಸೂಚಕಕಾರ್ಯವನ್ನು ಮಾಡಲಿಲ್ಲ. ಆದರೆ ಇವರ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲವೂ ಸತ್ಯವಾಗಿದೆ,” ಎಂದರು.</verse>
				<verse number="42">ಅಲ್ಲಿ ಅನೇಕರು ಯೇಸುವಿನಲ್ಲಿ ನಂಬಿಕೆ ಇಟ್ಟರು.</verse>
			</chapter>
			<chapter number="11">
				<verse number="1">ಮರಿಯಳ ಮತ್ತು ಆಕೆಯ ಸಹೋದರಿಯಾದ ಮಾರ್ಥಳ ಊರಾದ ಬೇಥಾನ್ಯದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು.</verse>
				<verse number="2">ಯೇಸುಸ್ವಾಮಿಯ ಪಾದಗಳಿಗೆ ತೈಲವನ್ನು ಹಚ್ಚಿ ತನ್ನ ತಲೆಕೂದಲಿನಿಂದ ಅವರ ಪಾದಗಳನ್ನು ಒರಸಿದ ಮರಿಯಳ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು.</verse>
				<verse number="3">ಆದ್ದರಿಂದ ಅವನ ಸಹೋದರಿಯರು, “ಸ್ವಾಮೀ, ಇಗೋ, ನೀವು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ,” ಎಂದು ಯೇಸುವಿಗೆ ಹೇಳಿ ಕಳುಹಿಸಿದರು.</verse>
				<verse number="4">ಯೇಸು ಅದನ್ನು ಕೇಳಿ, “ಈ ಕಾಯಿಲೆಯು ಮರಣಕ್ಕಾಗಿಯಲ್ಲ. ದೇವರ ಮಹಿಮೆಗಾಗಿಯೇ ಬಂದದ್ದು. ಇದರಿಂದ ದೇವರ ಪುತ್ರನಿಗೆ ಮಹಿಮೆಯಾಗುವುದು,” ಎಂದು ಹೇಳಿದರು.</verse>
				<verse number="5">ಮಾರ್ಥಳನ್ನು ಅವಳ ಸಹೋದರಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದರು.</verse>
				<verse number="6">ಅವನು ಅಸ್ವಸ್ಥನಾಗಿದ್ದಾನೆಂದು ಯೇಸು ಕೇಳಿದ ಮೇಲೆಯೂ ಎರಡು ದಿವಸ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡರು.</verse>
				<verse number="7">ತರುವಾಯ ಯೇಸು ತಮ್ಮ ಶಿಷ್ಯರಿಗೆ, “ನಾವು ತಿರುಗಿ ಯೂದಾಯಕ್ಕೆ ಹೋಗೋಣ,” ಎಂದರು.</verse>
				<verse number="8">ಯೇಸುವಿನ ಶಿಷ್ಯರು ಅವರಿಗೆ, “ಬೋಧಕರೇ, ಈಗ ಯೆಹೂದ್ಯರು ನಿಮ್ಮ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ. ತಿರುಗಿ ನೀವು ಅಲ್ಲಿಗೆ ಹೋಗಬೇಕೆಂದಿರುವಿರಾ?” ಎಂದರು.</verse>
				<verse number="9">ಯೇಸು, “ಹಗಲಿಗೆ ಹನ್ನೆರಡು ತಾಸುಗಳು ಇವೆಯಲ್ಲವೇ? ಯಾರಾದರೂ ಹಗಲಿನಲ್ಲಿ ನಡೆದರೆ ಎಡವುದಿಲ್ಲ ಏಕೆಂದರೆ ಈ ಲೋಕದ ಬೆಳಕು ಅವರಿಗೆ ಕಾಣಿಸುತ್ತದೆ.</verse>
				<verse number="10">ಯಾರಾದರೂ ರಾತ್ರಿಯಲ್ಲಿ ನಡೆದರೆ ತಮ್ಮಲ್ಲಿ ಬೆಳಕಿಲ್ಲದಿರುವುದರಿಂದ ಅವರು ಎಡವುತ್ತಾರೆ,” ಎಂದು ಉತ್ತರಕೊಟ್ಟರು.</verse>
				<verse number="11">ಇದನ್ನು ಹೇಳಿದ ತರುವಾಯ ಯೇಸು ಅವರಿಗೆ, “ನಮ್ಮ ಸ್ನೇಹಿತ ಲಾಜರನು ನಿದ್ರೆ ಮಾಡುತ್ತಿದ್ದಾನೆ. ಆದರೆ ನಾನು ಹೋಗಿ ಅವನನ್ನು ಎಬ್ಬಿಸಬೇಕು,” ಎಂದರು.</verse>
				<verse number="12">ಯೇಸುವಿನ ಶಿಷ್ಯರು, “ಸ್ವಾಮೀ, ಅವನು ನಿದ್ರೆಮಾಡುತ್ತಿದ್ದರೆ ಸ್ವಸ್ಥನಾಗುವನು,” ಎಂದರು.</verse>
				<verse number="13">ಯೇಸು ಅವನ ಮರಣವನ್ನು ಕುರಿತು ಹೇಳಿದ್ದರು. ಆದರೆ ಶಿಷ್ಯರು ನಿದ್ರೆಯ ವಿಶ್ರಾಂತಿಯನ್ನು ಕುರಿತು ಯೇಸು ಹೇಳಿದರೆಂದು ಯೋಚಿಸಿದರು.</verse>
				<verse number="14">ಆಗ ಯೇಸು ಸ್ಪಷ್ಟವಾಗಿ ಅವರಿಗೆ, “ಲಾಜರನು ಸತ್ತುಹೋಗಿದ್ದಾನೆ.</verse>
				<verse number="15">ಆದರೆ ನಾನು ಅಲ್ಲಿ ಇಲ್ಲದೆ ಹೋದದ್ದು ನಿಮ್ಮ ನಿಮಿತ್ತವಾಗಿ ಸಂತೋಷಪಡುತ್ತೇನೆ, ಯಾಕೆಂದರೆ ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಆದರೆ ಅವನ ಬಳಿಗೆ ಹೋಗೋಣ,” ಎಂದು ಹೇಳಿದರು.</verse>
				<verse number="16">ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಗುರುವಿನೊಂದಿಗೆ ಸಾಯುವುದಕ್ಕೆ ಹೋಗೋಣ,” ಎಂದನು.</verse>
				<verse number="17">ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿವಸಗಳಾಗಿದ್ದವೆಂದು ತಿಳಿಯಿತು.</verse>
				<verse number="18">ಬೇಥಾನ್ಯವು ಯೆರೂಸಲೇಮಿನಿಂದ ಸುಮಾರು ಮೂರು ಕಿಲೋಮೀಟರಿನಷ್ಟು ದೂರವಿತ್ತು.</verse>
				<verse number="19">ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯವಾಗಿ ಸಂತೈಸುವುದಕ್ಕೆ ಬಂದಿದ್ದರು.</verse>
				<verse number="20">ಯೇಸು ಬರುತ್ತಿದ್ದಾರೆಂದು ಮಾರ್ಥಳು ಕೇಳಿದಾಗ ಅವರನ್ನು ಎದುರುಗೊಳ್ಳಲು ಹೋದಳು. ಆದರೆ ಮರಿಯಳು ಮನೆಯಲ್ಲಿಯೇ ಕುಳಿತುಕೊಂಡಿದ್ದಳು.</verse>
				<verse number="21">ಆಗ ಮಾರ್ಥಳು ಯೇಸುವಿಗೆ, “ಸ್ವಾಮೀ, ನೀವು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ.</verse>
				<verse number="22">ಆದರೆ ಈಗಲೂ ನೀವು ದೇವರನ್ನು ಏನು ಕೇಳಿಕೊಂಡರೂ ದೇವರು ಅದನ್ನು ನಿಮಗೆ ಕೊಡುವರೆಂದು ನಾನು ಬಲ್ಲೆನು,” ಎಂದಳು.</verse>
				<verse number="23">ಯೇಸು ಆಕೆಗೆ, “ನಿನ್ನ ಸಹೋದರನು ಪುನಃ ಜೀವಂತನಾಗಿ ಎದ್ದೇಳುವನು,” ಎಂದು ಹೇಳಿದರು.</verse>
				<verse number="24">ಮಾರ್ಥಳು ಯೇಸುವಿಗೆ, “ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನು ಪುನಃ ಎದ್ದು ಬರುವನೆಂದು ನಾನು ಬಲ್ಲೆನು,” ಎಂದು ಹೇಳಿದಳು.</verse>
				<verse number="25">ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವರು ಸತ್ತರೂ ಬದುಕುವರು.</verse>
				<verse number="26">ಜೀವಿಸುವ ಪ್ರತಿಯೊಬ್ಬರೂ ನನ್ನಲ್ಲಿ ನಂಬಿಕೆಯಿಟ್ಟರೆ, ಅವರು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯಾ?” ಎಂದು ಕೇಳಿದ್ದಕ್ಕೆ,</verse>
				<verse number="27">ಆಕೆಯು ಯೇಸುವಿಗೆ, “ಹೌದು, ಸ್ವಾಮೀ, ಲೋಕಕ್ಕೆ ಬರಬೇಕಾಗಿದ್ದ ದೇವರ ಪುತ್ರನಾದ ಕ್ರಿಸ್ತನು ನೀವೇ ಎಂದು ನಾನು ನಂಬಿದ್ದೇನೆ,” ಎಂದಳು.</verse>
				<verse number="28">ಇದನ್ನು ಹೇಳಿ ಆಕೆಯು ಹೊರಟುಹೋಗಿ ತನ್ನ ಸಹೋದರಿ ಮರಿಯಳನ್ನು ರಹಸ್ಯವಾಗಿ ಕರೆದು, “ಬೋಧಕರು ಇಲ್ಲಿದ್ದಾರೆ, ನಿನ್ನನ್ನು ಕರೆಯುತ್ತಾರೆ,” ಎಂದಳು.</verse>
				<verse number="29">ಆಕೆಯು ಇದನ್ನು ಕೇಳಿದಾಗ ತಟ್ಟನೆ ಎದ್ದು ಯೇಸುವಿನ ಬಳಿಗೆ ಹೋದಳು.</verse>
				<verse number="30">ಯೇಸು ಇನ್ನೂ ಊರೊಳಕ್ಕೆ ಬಾರದೆ ಮಾರ್ಥಳು ಅವರನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದರು.</verse>
				<verse number="31">ಮರಿಯಳೊಂದಿಗೆ ಮನೆಯಲ್ಲಿ ಆಕೆಯ ಜೊತೆಗಿದ್ದು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುತ್ತಿರುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯನ್ನು ಹಿಂಬಾಲಿಸಿದರು.</verse>
				<verse number="32">ಯೇಸು ಇದ್ದ ಸ್ಥಳಕ್ಕೆ ಮರಿಯಳೂ ಬಂದು ಅವರನ್ನು ಕಂಡು ಅವರ ಪಾದಗಳಿಗೆ ಬಿದ್ದು, “ಸ್ವಾಮೀ, ನೀವು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ,” ಎಂದು ಹೇಳಿದಳು.</verse>
				<verse number="33">ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಅಳುವುದನ್ನು ಯೇಸು ಕಂಡಾಗ ಆತ್ಮದಲ್ಲಿ ನೊಂದುಕೊಂಡು ಕಳವಳಗೊಂಡವರಾಗಿ,</verse>
				<verse number="34">“ಅವನನ್ನು ಎಲ್ಲಿ ಸಮಾಧಿಮಾಡಿದ್ದೀರಿ?” ಎಂದು ಕೇಳಿದರು. ಅವರು ಯೇಸುವಿಗೆ, “ಸ್ವಾಮೀ, ಬಂದು ನೋಡಿರಿ,” ಎಂದರು.</verse>
				<verse number="35">ಯೇಸು ಕಣ್ಣೀರಿಟ್ಟರು.</verse>
				<verse number="36">ಆಗ ಯೆಹೂದ್ಯರು, “ನೋಡಿರಿ, ಈತನಿಗೆ ಲಾಜರನ ಮೇಲೆ ಎಷ್ಟು ಪ್ರೀತಿ,” ಎಂದರು.</verse>
				<verse number="37">ಅವರಲ್ಲಿ ಕೆಲವರು, “ಆ ಕುರುಡನ ಕಣ್ಣುಗಳನ್ನು ತೆರೆದ ಈತನು ಲಾಜರನನ್ನೂ ಸಾಯದಂತೆ ಮಾಡಬಾರದಿತ್ತೆ?” ಎಂದರು.</verse>
				<verse number="38">ಯೇಸು ತಿರುಗಿ ತಮ್ಮಲ್ಲಿ ನೊಂದುಕೊಳ್ಳುತ್ತಾ ಸಮಾಧಿಗೆ ಬಂದರು. ಅದು ಗವಿಯಾಗಿತ್ತು; ಒಂದು ಕಲ್ಲು ಅದರ ಬಾಗಿಲಿಗೆ ಮುಚ್ಚಲಾಗಿತ್ತು.</verse>
				<verse number="39">ಯೇಸು, “ಆ ಕಲ್ಲನ್ನು ತೆಗೆದುಹಾಕಿರಿ,” ಎಂದರು. ಅದಕ್ಕೆ ಸತ್ತವನ ಸಹೋದರಿ ಮಾರ್ಥಳು ಯೇಸುವಿಗೆ, “ಸ್ವಾಮೀ, ಈಗ ದುರ್ವಾಸನೆ ಇರುವುದು. ಅವನು ಸತ್ತು ನಾಲ್ಕು ದಿನಗಳಾಗಿವೆ,” ಎಂದಳು.</verse>
				<verse number="40">ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದರು.</verse>
				<verse number="41">ಆಗ ಕೆಲವರು ಕಲ್ಲನ್ನು ತೆಗೆದುಹಾಕಿದರು. ಯೇಸು ಕಣ್ಣೆತ್ತಿ ಮೇಲೆ ನೋಡಿ, “ತಂದೆಯೇ, ನೀವು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.</verse>
				<verse number="42">ನೀವು ನನಗೆ ಯಾವಾಗಲೂ ಕಿವಿಗೊಡುತ್ತೀರಿ ಎಂದು ನಾನು ಬಲ್ಲೆನು. ಆದರೆ ನನ್ನ ಸುತ್ತಲೂ ನಿಂತಿರುವ ಈ ಜನರು, ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ನಂಬುವಂತೆ ನಾನು ಇದನ್ನು ಹೇಳಿದೆನು,” ಎಂದರು.</verse>
				<verse number="43">ಯೇಸು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ,” ಎಂದು ಗಟ್ಟಿಯಾದ ಸ್ವರದಿಂದ ಕೂಗಿದರು.</verse>
				<verse number="44">ಆಗ ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವವಸ್ತ್ರದಿಂದ ಕಟ್ಟಿದ್ದವು, ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅಲ್ಲಿದ್ದವರಿಗೆ, “ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ,” ಎಂದು ಹೇಳಿದರು.</verse>
				<verse number="45">ಆದ್ದರಿಂದ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಾರ್ಯಗಳನ್ನು ಕಂಡು ಅವರಲ್ಲಿ ನಂಬಿಕೆಯಿಟ್ಟರು.</verse>
				<verse number="46">ಆದರೆ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ ಕೃತ್ಯಗಳನ್ನು ಅವರಿಗೆ ಹೇಳಿದರು.</verse>
				<verse number="47">ಆಗ ಮುಖ್ಯಯಾಜಕರೂ ಫರಿಸಾಯರೂ ಆಲೋಚನಾ ಸಭೆಯನ್ನು ಕೂಡಿಸಿ, “ಈತನು ಅನೇಕ ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ, ನಾವು ಏನು ಮಾಡೋಣ?</verse>
				<verse number="48">ನಾವು ಈತನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಆತನನ್ನೇ ನಂಬುವರು. ರೋಮನ್ನರು ಬಂದು ನಮ್ಮ ದೇವಾಲಯವನ್ನೂ ರಾಷ್ಟ್ರವನ್ನೂ ನಾಶಮಾಡುವರು,” ಎಂದರು.</verse>
				<verse number="49">ಅವರಲ್ಲಿ ಆ ವರ್ಷದ ಮಹಾಯಾಜಕನಾದ ಕಾಯಫನೆಂಬವನು ಅವರಿಗೆ, “ನಿಮಗೆ ಏನೂ ತಿಳಿಯುವುದಿಲ್ಲ.</verse>
				<verse number="50">ಇಡೀ ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಎಣಿಸುವುದೇ ಇಲ್ಲ,” ಎಂದನು.</verse>
				<verse number="51">ಇದನ್ನು ಅವನು ತಾನಾಗಿಯೇ ಹೇಳಲಿಲ್ಲ. ಅವನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ ಯೇಸು ಆ ರಾಷ್ಟ್ರಕ್ಕಾಗಿ ಮಾತ್ರವಲ್ಲದೆ</verse>
				<verse number="52">ಚದುರಿರುವ ದೇವರ ಮಕ್ಕಳನ್ನು ಒಂದಾಗಿ ಕೂಡಿಸುವುದಕ್ಕಾಗಿಯೂ ಯೇಸು ಸಾಯಬೇಕಾಗಿದೆ ಎಂದು ಅವನು ಪ್ರವಾದಿಸಿದನು.</verse>
				<verse number="53">ಅವರು ಆ ದಿನದಿಂದ ಯೇಸುವನ್ನು ಕೊಲ್ಲಬೇಕೆಂಬ ಒಳಸಂಚು ಮಾಡಿಕೊಂಡರು.</verse>
				<verse number="54">ಹೀಗಿರುವುದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅವರು ಅಲ್ಲಿಂದ ಅರಣ್ಯಕ್ಕೆ ಸಮೀಪದಲ್ಲಿದ್ದ ಎಫ್ರಾಯೀಮ್ ಎಂಬ ಊರಿಗೆ ಹೋಗಿ ಅಲ್ಲಿ ತಮ್ಮ ಶಿಷ್ಯರ ಸಂಗಡ ವಾಸಮಾಡಿದರು.</verse>
				<verse number="55">ಆಗ ಯೆಹೂದ್ಯರ ಪಸ್ಕಹಬ್ಬವು ಹತ್ತಿರವಾಗಿತ್ತು. ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವುದಕ್ಕಾಗಿ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು.</verse>
				<verse number="56">ಅವರು ಯೇಸುವನ್ನು ಹುಡುಕುತ್ತಾ ದೇವಾಲಯದಲ್ಲಿ ನಿಂತುಕೊಂಡು, “ಆತನು ಹಬ್ಬಕ್ಕೆ ಬರುತ್ತಾನೋ ಇಲ್ಲವೋ? ನಿಮಗೆ ಹೇಗೆ ಕಾಣುತ್ತದೆ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.</verse>
				<verse number="57">ಆಗ ಮುಖ್ಯಯಾಜಕರೂ ಫರಿಸಾಯರೂ ಯೇಸುವನ್ನು ಬಂಧಿಸುವಂತೆ ಆತನ ಸುಳಿವು ಯಾರಿಗಾದರೂ ತಿಳಿದಿದ್ದರೆ ಅವರು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.</verse>
			</chapter>
			<chapter number="12">
				<verse number="1">ಪಸ್ಕಹಬ್ಬಕ್ಕೆ ಆರು ದಿನಗಳ ಮುಂಚೆ ಯೇಸು ಬೇಥಾನ್ಯಕ್ಕೆ ಬಂದರು. ಅಲ್ಲಿಯೇ ಯೇಸು ಮರಣದಿಂದ ಎಬ್ಬಿಸಿದ ಲಾಜರನು ಇದ್ದನು.</verse>
				<verse number="2">ಅಲ್ಲಿ ಅವರು ಯೇಸುವಿಗಾಗಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಬಡಿಸುತ್ತಿದ್ದಳು. ಯೇಸುವಿನೊಂದಿಗೆ ಊಟಕ್ಕೆ ಕುಳಿತವರಲ್ಲಿ ಲಾಜರನೂ ಒಬ್ಬನಾಗಿದ್ದನು.</verse>
				<verse number="3">ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ಮೂಲಿಕೆಯ ತೈಲವನ್ನು ಸುಮಾರು ಅರ್ಧ ಲೀಟರಿನಷ್ಟು ತಂದು ಯೇಸುವಿನ ಪಾದಕ್ಕೆ ಸುರಿದು ತನ್ನ ತಲೆಯ ಕೂದಲಿನಿಂದ ಅವರ ಪಾದಗಳನ್ನು ಒರೆಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತು.</verse>
				<verse number="4">ಆಗ ಯೇಸುವಿನ ಶಿಷ್ಯರಲ್ಲಿ ಒಬ್ಬನಾಗಿದ್ದ ಹಾಗೂ ಅವರನ್ನು ಹಿಡಿದುಕೊಡುವುದಕ್ಕಿದ್ದ ಯೂದ ಇಸ್ಕರಿಯೋತನು,</verse>
				<verse number="5">“ಈ ತೈಲವನ್ನು ಏಕೆ ಮುನ್ನೂರು ಬೆಳ್ಳಿ ನಾಣ್ಯಗಳನ್ನು ಮಾರಿ ಬಡವರಿಗೆ ಕೊಡಲಿಲ್ಲ?” ಎಂದನು.</verse>
				<verse number="6">ಅವನು ಬಡವರ ಹಿತಚಿಂತನೆಯಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು, ಹಣದ ಚೀಲವನ್ನು ಇಟ್ಟುಕೊಂಡು ಅದರಲ್ಲಿ ಹಾಕಿದ್ದನ್ನು ಕದ್ದುಕೊಳ್ಳುತ್ತಿದ್ದನು. ಆದ್ದರಿಂದಲೇ ಇದನ್ನು ಹೇಳಿದನು.</verse>
				<verse number="7">ಆಗ ಯೇಸು, “ಮರಿಯಳನ್ನು ಬಿಟ್ಟುಬಿಡಿರಿ, ನನ್ನನ್ನು ಹೂಣಿಡುವ ದಿವಸಕ್ಕಾಗಿ ಈಕೆಯು ಇದನ್ನು ಇಟ್ಟುಕೊಳ್ಳಲಿ.</verse>
				<verse number="8">ಏಕೆಂದರೆ ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲ,” ಎಂದರು.</verse>
				<verse number="9">ಯೇಸು ಅಲ್ಲಿರುವುದನ್ನು ಯೆಹೂದ್ಯರ ದೊಡ್ಡ ಗುಂಪು ತಿಳಿದು, ಅವರನ್ನು ಮಾತ್ರವಲ್ಲ, ಯೇಸು ಮರಣದಿಂದ ಎಬ್ಬಿಸಿದ ಲಾಜರನನ್ನೂ ಕಾಣಲು ಬಂದಿದ್ದರು.</verse>
				<verse number="10">ಮುಖ್ಯಯಾಜಕರು ಲಾಜರನನ್ನು ಸಹ ಕೊಲ್ಲಬೇಕೆಂದು ಆಲೋಚಿಸಿದರು.</verse>
				<verse number="11">ಏಕೆಂದರೆ ಅವನ ದೆಸೆಯಿಂದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಡೆಗೆ ಹೋಗಿ ನಂಬಿಕೆ ಇಟ್ಟಿದ್ದರು.</verse>
				<verse number="12">ಮರುದಿನ ಹಬ್ಬಕ್ಕೆ ಬಂದ ದೊಡ್ಡ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಿದ್ದಾರೆಂಬ ಸುದ್ದಿ ಕೇಳಿ,</verse>
				<verse number="13">ಖರ್ಜೂರದ ಗರಿಗಳನ್ನು ತೆಗೆದುಕೊಂಡು ಅವರನ್ನು ಎದುರುಗೊಳ್ಳಲು ಹೊರಗೆ ಬಂದು, “ಹೊಸನ್ನ! ” “ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ! ” “ಇಸ್ರಾಯೇಲಿನ ಅರಸನಿಗೆ ಶುಭವಾಗಲಿ!” ಎಂದು ಕೂಗಿದರು.</verse>
				<verse number="14">ಯೇಸು ಕತ್ತೆಮರಿಯನ್ನು ಕಂಡು ಅದರ ಮೇಲೆ ಕುಳಿತುಕೊಂಡರು. ಪವಿತ್ರ ವೇದದಲ್ಲಿ ಬರೆದಿರುವಂತೆ:</verse>
				<verse number="15">“ಚೀಯೋನ್ ಪುತ್ರಿಯೇ, ಭಯಪಡಬೇಡ, ಇಗೋ, ನಿನ್ನ ಅರಸ ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾರೆ,” ಎಂಬ ಮಾತು ನೆರವೇರಿತು.</verse>
				<verse number="16">ಇವುಗಳನ್ನು ಯೇಸುವಿನ ಶಿಷ್ಯರು ಮೊದಲು ತಿಳಿದಿರಲಿಲ್ಲ. ಆದರೆ ಯೇಸು ಮಹಿಮೆ ಹೊಂದಿದಾಗ ಪವಿತ್ರ ವೇದದಲ್ಲಿ ಅವರ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಜನರು ಅವರಿಗೆ ಮಾಡಿದರೆಂದು ಗ್ರಹಿಸಿದರು.</verse>
				<verse number="17">ಯೇಸು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದಾಗ ಅವರ ಸಂಗಡ ಇದ್ದ ಜನರೇ ಈ ವಿಷಯವನ್ನು ಸಾರುತ್ತಿದ್ದರು.</verse>
				<verse number="18">ಯೇಸು ಈ ಸೂಚಕಕಾರ್ಯವನ್ನು ಮಾಡಿದರೆಂದು ಅನೇಕ ಜನರು ಕೇಳಿದ್ದರಿಂದ ಅವರು ಸಹ ಯೇಸುವನ್ನು ಸಂಧಿಸಲು ಬಂದರು.</verse>
				<verse number="19">ಆದ್ದರಿಂದ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ, ನಮಗೆ ಏನೂ ಪ್ರಯೋಜನವಾಗಲಿಲ್ಲ. ಲೋಕವೇ ಆತನ ಹಿಂದೆ ಹೋಗುತ್ತಿದೆ!” ಎಂದು ಮಾತನಾಡಿಕೊಂಡರು.</verse>
				<verse number="20">ಹಬ್ಬದ ಆರಾಧನೆಗೆ ಗ್ರೀಕರಲ್ಲಿ ಕೆಲವರು ಬಂದಿದ್ದರು.</verse>
				<verse number="21">ಇವರು ಗಲಿಲಾಯದ ಬೇತ್ಸಾಯಿದವನಾದ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ,” ಎಂದರು.</verse>
				<verse number="22">ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನೂ ಫಿಲಿಪ್ಪನೂ ಬಂದು ಯೇಸುವಿಗೆ ತಿಳಿಸಿದರು.</verse>
				<verse number="23">ಯೇಸು ಅವರಿಗೆ, “ಮನುಷ್ಯಪುತ್ರನು ಮಹಿಮೆಪಡುವ ಸಮಯ ಬಂದಿದೆ.</verse>
				<verse number="24">ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋಧಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು, ಆದರೆ ಅದು ಸತ್ತರೆ ಬಹಳ ಫಲಕೊಡುವುದು.</verse>
				<verse number="25">ತಮ್ಮ ಪ್ರಾಣವನ್ನು ಪ್ರೀತಿಸುವವರು ಅದನ್ನು ಕಳೆದುಕೊಳ್ಳುವರು. ಈ ಲೋಕದಲ್ಲಿ ತಮ್ಮ ಪ್ರಾಣವನ್ನು ದ್ವೇಷಿಸುವವರು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವರು.</verse>
				<verse number="26">ನನ್ನ ಸೇವೆ ಮಾಡಬೇಕೆಂದಿರುವವರು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕರೂ ಇರುವರು. ನನ್ನ ಸೇವೆ ಮಾಡುವವರನ್ನು ನನ್ನ ತಂದೆಯು ಸನ್ಮಾನಿಸುವರು.</verse>
				<verse number="27">“ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸಿರಿ’ ಎಂದು ಹೇಳಲೋ? ಇಲ್ಲ. ನಾನು ಈ ಗಳಿಗೆಗಾಗಿಯೇ ಬಂದಿದ್ದೇನಲ್ಲಾ?</verse>
				<verse number="28">ತಂದೆಯೇ, ನಿಮ್ಮ ಹೆಸರನ್ನು ಮಹಿಮೆ ಪಡಿಸಿಕೊಳ್ಳಿರಿ,” ಎಂದರು. ಆಗ, “ಹೌದು, ನಾನು ಮಹಿಮೆಪಡಿಸಿದ್ದೇನೆ, ಪುನಃ ಮಹಿಮೆ ಪಡಿಸುವೆನು,” ಎಂಬ ಸ್ವರವು ಪರಲೋಕದಿಂದ ಕೇಳಿಸಿತು.</verse>
				<verse number="29">ಆಗ ಅಲ್ಲಿ ನಿಂತಿದ್ದ ಜನರು ಅದನ್ನು ಕೇಳಿ, “ಗುಡುಗಿತು,” ಎಂದರು. ಬೇರೆಯವರು, “ದೇವದೂತನೊಬ್ಬನು ಈತನ ಸಂಗಡ ಮಾತನಾಡಿದನು,” ಎಂದರು.</verse>
				<verse number="30">ಯೇಸು, “ಈ ಸ್ವರವು ನನಗಾಗಿ ಅಲ್ಲ, ನಿಮಗಾಗಿಯೇ ಬಂದಿದೆ.</verse>
				<verse number="31">ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. ಇಹಲೋಕದ ಅಧಿಪತಿಯನ್ನು ಈಗ ಹೊರಗೆ ಹಾಕಲಾಗುವುದು.</verse>
				<verse number="32">ಆದರೆ ನನ್ನನ್ನು ಭೂಮಿಯಿಂದ ಮೇಲೇರಿಸಿದಾಗ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುತ್ತೇನೆ,” ಎಂದರು.</verse>
				<verse number="33">ತಾವು ಎಂಥಾ ಮರಣದಿಂದ ಸಾಯಬೇಕಾಗಿದೆ ಎಂದು ಸೂಚಿಸಿ ಇದನ್ನು ಹೇಳಿದರು.</verse>
				<verse number="34">ಜನರು ಯೇಸುವಿಗೆ, “ಕ್ರಿಸ್ತ ಸದಾಕಾಲವೂ ಇರುತ್ತಾರೆ ಎಂದು ನಾವು ಮೋಶೆಯ ನಿಯಮದಿಂದ ಕೇಳಿದ್ದೇವೆ. ಹಾಗಾದರೆ ಮನುಷ್ಯಪುತ್ರನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುವುದು ಹೇಗೆ? ಈ ಮನುಷ್ಯಪುತ್ರನು ಯಾರು?” ಎಂದು ಕೇಳಿದರು.</verse>
				<verse number="35">ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮ ನಡುವೆ ಇರುತ್ತದೆ. ಕತ್ತಲು ನಿಮ್ಮನ್ನು ಕವಿಯುವುದಕ್ಕೆ ಮುಂಚೆ, ನಿಮಗೆ ಬೆಳಕಿರುವಾಗಲೇ ನಡೆಯಿರಿ. ಕತ್ತಲಿನಲ್ಲಿ ನಡೆಯುವವನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯದು.</verse>
				<verse number="36">ನೀವು ಬೆಳಕಿನ ಪುತ್ರರಾಗುವಂತೆ ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ,” ಎಂದರು. ಯೇಸು ಇವುಗಳನ್ನು ಹೇಳಿ, ಅವರಿಂದ ಹೊರಟುಹೋಗಿ ಅಡಗಿಕೊಂಡರು.</verse>
				<verse number="37">ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಜನರು ಅವರನ್ನು ನಂಬಲಿಲ್ಲ.</verse>
				<verse number="38">ಇದರಿಂದ, “ಸ್ವಾಮೀ, ನಮ್ಮ ಸುದ್ದಿಯನ್ನು ಯಾರು ನಂಬಿದರು? ಕರ್ತ ಆಗಿರುವವರ ಬಾಹುವು ಯಾರಿಗೆ ಪ್ರಕಟವಾಯಿತು?” ಎಂದು ಪ್ರವಾದಿ ಯೆಶಾಯನು ನುಡಿದದ್ದು ನೆರವೇರಿತು.</verse>
				<verse number="39">ಅವರು ನಂಬಲಾರದೆ ಹೋದದ್ದರಿಂದ ಯೆಶಾಯನು ಮತ್ತೊಂದು ಕಡೆ ಹೇಳಿದ್ದೇನೆಂದರೆ:</verse>
				<verse number="40">“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ದೇವರು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣ ಮಾಡಿದರು.”</verse>
				<verse number="41">ಯೆಶಾಯನು ಯೇಸುವಿನ ಮಹಿಮೆಯನ್ನು ಕಂಡಿದ್ದರಿಂದ ಅವರ ವಿಷಯವಾಗಿ ಇವುಗಳನ್ನು ಹೇಳಿದನು.</verse>
				<verse number="42">ಆದರೂ ಅಧಿಕಾರಿಗಳಲ್ಲಿ ಅನೇಕರು ಆ ಸಮಯದಲ್ಲಿ ಯೇಸುವನ್ನು ನಂಬಿದರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕಾರ ಆಗಬಾರದೆಂದು ಅವರು ತಮ್ಮ ನಂಬಿಕೆಯನ್ನು ಬಹಿರಂಗವಾಗಿ ಅರಿಕೆ ಮಾಡಲಿಲ್ಲ.</verse>
				<verse number="43">ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.</verse>
				<verse number="44">ಯೇಸು, ಕೂಗಿ ಹೇಳಿದ್ದೇನೆಂದರೆ, “ನನ್ನನ್ನು ನಂಬುವವರು ನನ್ನಲ್ಲಿ ಅಲ್ಲ, ನನ್ನನ್ನು ಕಳುಹಿಸಿಕೊಟ್ಟ ತಂದೆಯಲ್ಲಿಯೇ ವಿಶ್ವಾಸವಿಡುತ್ತಾರೆ.</verse>
				<verse number="45">ನನ್ನನ್ನು ನೋಡುವವರು ನನ್ನನ್ನು ಕಳುಹಿಸಿದ ತಂದೆಯನ್ನೇ ಕಾಣುತ್ತಾರೆ.</verse>
				<verse number="46">ನನ್ನಲ್ಲಿ ನಂಬಿಕೆಯಿಡುವವರು ಕತ್ತಲೆಯಲ್ಲಿ ಉಳಿಯಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.</verse>
				<verse number="47">“ಯಾರು ನನ್ನ ಮಾತುಗಳನ್ನು ಕೇಳಿಯೂ ಅವುಗಳನ್ನು ಕೈಕೊಂಡು ನಡೆಯದೆ ಹೋದರೆ ನಾನು ಅವರಿಗೆ ಈಗ ತೀರ್ಪು ಮಾಡುವುದಿಲ್ಲ. ಏಕೆಂದರೆ ಲೋಕಕ್ಕೆ ತೀರ್ಪು ಮಾಡುವುದಕ್ಕಾಗಿ ಅಲ್ಲ, ಲೋಕವನ್ನು ರಕ್ಷಿಸುವುದಕ್ಕಾಗಿಯೇ ನಾನು ಬಂದಿದ್ದೇನೆ.</verse>
				<verse number="48">ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದವರಿಗೆ ತೀರ್ಪು ಮಾಡುವಂಥದ್ದು ಒಂದು ಇದೆ. ಅದು ನಾನು ಮಾತನಾಡಿದ ವಾಕ್ಯವೇ, ಅದೇ ಕಡೇ ದಿನದಲ್ಲಿ ಅವರಿಗೆ ತೀರ್ಪು ಮಾಡುವುದು.</verse>
				<verse number="49">ಏಕೆಂದರೆ ನನ್ನಷ್ಟಕ್ಕೆ ನಾನೇ ಮಾತನಾಡಲಿಲ್ಲ. ಆದರೆ ನಾನು ಏನು ಹೇಳಬೇಕು ಮತ್ತು ನಾನು ಏನು ಮಾತನಾಡಬೇಕು ಎಂದು ನನ್ನನ್ನು ಕಳುಹಿಸಿದ ತಂದೆಯೇ ನನಗೆ ಆಜ್ಞೆ ಕೊಟ್ಟಿದ್ದಾರೆ.</verse>
				<verse number="50">ಅವರ ಆಜ್ಞೆಯು ನಿತ್ಯಜೀವಕ್ಕೆ ಮಾರ್ಗವಾಗಿದೆ ಎಂದು ನಾನು ಬಲ್ಲೆನು. ಆದ್ದರಿಂದ, ತಂದೆಯು ನನಗೆ ಹೇಳಿದಂತೆಯೇ ಮಾತನಾಡುತ್ತೇನೆ,” ಎಂದು ಹೇಳಿದರು.</verse>
			</chapter>
			<chapter number="13">
				<verse number="1">ಅಂದು ಪಸ್ಕಹಬ್ಬದ ಹಿಂದಿನ ದಿನವಾಗಿತ್ತು. ಯೇಸು ತಾವು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಸಮಯ ಬಂತೆಂದು ತಿಳಿದು, ಈ ಲೋಕದಲ್ಲಿದ್ದ ತಮ್ಮವರನ್ನು ಪ್ರೀತಿಸುತ್ತಿದ್ದ ಆ ಪ್ರೀತಿಯ ಪರಿಪೂರ್ಣತೆಯನ್ನು ಈಗ ತೋರಿಸಲಿದ್ದರು.</verse>
				<verse number="2">ಸಾಯಂಕಾಲ ಊಟದ ಸಮಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಯೋಚನೆಯನ್ನು, ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಹಾಕಿದ್ದನು.</verse>
				<verse number="3">ತಂದೆಯು ತನ್ನ ಕೈಯಲ್ಲಿ ಎಲ್ಲವನ್ನೂ ಕೊಟ್ಟಿದ್ದಾರೆಂದೂ ತಾನು ದೇವರ ಬಳಿಯಿಂದ ಬಂದು ಮರಳಿ ದೇವರ ಬಳಿಗೆ ಹೋಗುತ್ತೇನೆಂದೂ ಯೇಸುವಿಗೆ ತಿಳಿದಿತ್ತು.</verse>
				<verse number="4">ಯೇಸು ಊಟದಿಂದೆದ್ದು ತಮ್ಮ ಮೇಲು ಹೊದಿಕೆಯನ್ನು ತೆಗೆದಿಟ್ಟು ಅಂಗವಸ್ತ್ರವನ್ನು ತೆಗೆದುಕೊಂಡು ಸೊಂಟಕ್ಕೆ ಕಟ್ಟಿಕೊಂಡರು.</verse>
				<verse number="5">ಅನಂತರ ಅವರು ಬೋಗುಣಿಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಪಾದಗಳನ್ನು ತೊಳೆಯುವುದಕ್ಕೂ ತಾವು ಸೊಂಟಕ್ಕೆ ಕಟ್ಟಿಕೊಂಡ ಅಂಗವಸ್ತ್ರದಿಂದ ಪಾದಗಳನ್ನು ಒರೆಸುವುದಕ್ಕೂ ಪ್ರಾರಂಭಿಸಿದರು.</verse>
				<verse number="6">ಯೇಸು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಯೇಸುವಿಗೆ, “ಸ್ವಾಮೀ, ನೀವು ನನ್ನ ಪಾದಗಳನ್ನು ತೊಳೆಯುತ್ತೀರೋ?” ಎಂದು ಕೇಳಿದನು.</verse>
				<verse number="7">ಯೇಸು ಅವನಿಗೆ, “ನಾನು ಮಾಡುವುದು ಏನೆಂದು ಈಗ ನಿನಗೆ ಅರ್ಥವಾಗುವುದಿಲ್ಲ. ಆದರೆ ಇನ್ನು ಮುಂದೆ ನಿನಗೆ ಅರ್ಥವಾಗುವುದು,” ಎಂದರು.</verse>
				<verse number="8">ಪೇತ್ರನು ಯೇಸುವಿಗೆ, “ನೀವು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು,” ಎಂದನು. ಯೇಸು ಅವನಿಗೆ, “ನಾನು ನಿನ್ನ ಪಾದಗಳನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇಲ್ಲ,” ಎಂದು ಹೇಳಿದರು.</verse>
				<verse number="9">ಅದಕ್ಕೆ ಸೀಮೋನ ಪೇತ್ರನು ಯೇಸುವಿಗೆ, “ಸ್ವಾಮೀ, ನನ್ನ ಪಾದಗಳನ್ನು ಮಾತ್ರವಲ್ಲದೆ, ನನ್ನ ಕೈಗಳನ್ನು ಮತ್ತು ತಲೆಯನ್ನು ಸಹ ತೊಳೆ,” ಎಂದನು.</verse>
				<verse number="10">ಯೇಸು ಅವನಿಗೆ, “ಸ್ನಾನಮಾಡಿಕೊಂಡವರು ತಮ್ಮ ಪಾದಗಳನ್ನು ಮಾತ್ರ ತೊಳೆದುಕೊಂಡರೆ ಸಾಕು. ಅವರು ಸಂಪೂರ್ಣವಾಗಿ ಶುದ್ಧರಾಗಿದ್ದಾರೆ. ನೀವು ಸಹ ಶುದ್ಧರಾಗಿದ್ದೀರಿ. ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,” ಎಂದರು.</verse>
				<verse number="11">ತನ್ನನ್ನು ಹಿಡಿದುಕೊಡುವವನು ಯಾರೆಂದು ಯೇಸು ತಿಳಿದಿದ್ದರಿಂದ, “ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,” ಎಂದು ಹೇಳಿದರು.</verse>
				<verse number="12">ಯೇಸು ಅವರ ಪಾದಗಳನ್ನು ತೊಳೆದ ಮೇಲೆ ತಮ್ಮ ಮೇಲು ಹೊದಿಕೆಯನ್ನು ಧರಿಸಿ, ತಮ್ಮ ಸ್ಥಳದಲ್ಲಿ ಕುಳಿತುಕೊಂಡು ಅವರಿಗೆ, “ನಾನು ನಿಮಗೆ ಮಾಡಿದ್ದು ಏನೆಂದು ಅರ್ಥವಾಯಿತೋ?</verse>
				<verse number="13">ನೀವು ನನ್ನನ್ನು ‘ಬೋಧಕರೇ’ ಮತ್ತು ‘ಕರ್ತಾ’ ಎಂದು ಕರೆಯುತ್ತೀರಿ. ನೀವು ಹೇಳುವುದು ಸರಿ. ಹೌದು, ನಾನು ಅಂಥವನೇ ಆಗಿದ್ದೇನೆ.</verse>
				<verse number="14">ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು.</verse>
				<verse number="15">ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ಕೊಟ್ಟಿದ್ದೇನೆ.</verse>
				<verse number="16">ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತನ್ನ ಧಣಿಗಿಂತ ಆಳು ದೊಡ್ಡವನಲ್ಲ, ಹಾಗೆಯೇ ಕಳುಹಿಸಲಾದವನು ಅವನನ್ನು ಕಳುಹಿಸಿದವನಿಗಿಂತ ದೊಡ್ಡವನಲ್ಲ.</verse>
				<verse number="17">ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.</verse>
				<verse number="18">“ನಾನು ನಿಮ್ಮೆಲ್ಲರನ್ನು ಕುರಿತು ಮಾತನಾಡುತ್ತಿಲ್ಲ. ನಾನು ಆರಿಸಿಕೊಂಡವರನ್ನು ನಾನು ಬಲ್ಲೆನು. ಆದರೆ ‘ನನ್ನ ಸಂಗಡ ರೊಟ್ಟಿಯನ್ನು ತಿಂದವನೇ, ನನಗೆ ದ್ರೋಹ ಬಗೆದನು,’ ಎಂಬ ಪವಿತ್ರ ವಾಕ್ಯವು ನೆರವೇರಬೇಕಾಗಿದೆ.</verse>
				<verse number="19">“ಅದು ಆಗುವುದು, ‘ನಾನೇ ಆತನು’ ಎಂದು ನೀವು ನಂಬುವಂತೆ ಅದು ಸಂಭವಿಸುವುದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತಿದ್ದೇನೆ.</verse>
				<verse number="20">ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ಕಳುಹಿಸಿದ ತಂದೆಯನ್ನು ಸ್ವೀಕರಿಸುವವನು ನನ್ನನ್ನು ಸ್ವೀಕರಿಸುತ್ತಾನೆ; ನನ್ನನ್ನು ಸ್ವೀಕರಿಸುವವನು ನನ್ನನ್ನು ಕಳುಹಿಸಿದ ತಂದೆಯನ್ನೇ ಸ್ವೀಕರಿಸುತ್ತಾನೆ.”</verse>
				<verse number="21">ಯೇಸು ಇವುಗಳನ್ನು ಹೇಳುತ್ತಾ ಆತ್ಮದಲ್ಲಿ ನೊಂದುಕೊಂಡವರಾಗಿ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುವನು,” ಎಂದು ಸ್ವಷ್ಟವಾಗಿ ಹೇಳಿದರು.</verse>
				<verse number="22">ಆಗ ಶಿಷ್ಯರು ಗಲಿಬಿಲಿಗೊಂಡು, “ಯೇಸು ಯಾರನ್ನು ಕುರಿತು ಹೇಳಿದರು?” ಎಂದು ಒಬ್ಬರನ್ನೊಬ್ಬರು ನೋಡುವವರಾದರು.</verse>
				<verse number="23">ಶಿಷ್ಯರಲ್ಲಿ ಯೇಸು ಪ್ರೀತಿಸಿದ ಒಬ್ಬನು ಅವರ ಎದೆಗೆ ಒರಗಿಕೊಂಡಿದ್ದನು.</verse>
				<verse number="24">ಸೀಮೋನ ಪೇತ್ರನು ಅವನಿಗೆ ಸನ್ನೆಮಾಡಿ, “ಅವರು ಯಾರ ವಿಷಯವಾಗಿ ಮಾತನಾಡಿದರು ಕೇಳು,” ಎಂದು ಹೇಳಿದನು.</verse>
				<verse number="25">ಅವನು ಯೇಸುವಿನ ಎದೆಗೆ ಒರಗಿಕೊಂಡವನಾಗಿ, “ಸ್ವಾಮೀ, ಅವನು ಯಾರು?” ಎಂದು ಯೇಸುವನ್ನು ಕೇಳಿದನು.</verse>
				<verse number="26">ಅದಕ್ಕೆ ಯೇಸು, “ನಾನು ರೊಟ್ಟಿಯ ತುಂಡನ್ನು ಅದ್ದಿ ಯಾವನಿಗೆ ಕೊಡುತ್ತೇನೋ ಅವನೇ,” ಎಂದರು. ತರುವಾಯ, ಆ ರೊಟ್ಟಿಯ ತುಂಡನ್ನು ಅದ್ದಿ ಸೀಮೋನನ ಮಗನಾದ ಯೂದ ಇಸ್ಕರಿಯೋತನಿಗೆ ಕೊಟ್ಟರು.</verse>
				<verse number="27">ಅವನು ರೊಟ್ಟಿಯ ತುಂಡನ್ನು ತೆಗೆದುಕೊಂಡು ತಿಂದನು. ಅನಂತರ ಸೈತಾನನು ಅವನೊಳಗೆ ಪ್ರವೇಶಿಸಿದನು. ಆಗ ಯೇಸು ಅವನಿಗೆ, “ನೀನು ಮಾಡುವುದನ್ನು ಬೇಗನೆ ಮಾಡು,” ಎಂದು ಹೇಳಿದರು.</verse>
				<verse number="28">ಆದರೆ ಯೇಸು ಅವನಿಗೆ ಇದನ್ನು ಏಕೆ ಹೇಳಿದರೆಂದು ಕುಳಿತವರಲ್ಲಿ ಯಾರಿಗೂ ಗೊತ್ತಾಗಲಿಲ್ಲ.</verse>
				<verse number="29">ಏಕೆಂದರೆ ಯೂದನು ಹಣದ ಚೀಲವನ್ನು ಇಟ್ಟುಕೊಂಡಿದ್ದರಿಂದ ಯೇಸು ಅವನಿಗೆ, ಹಬ್ಬಕ್ಕೆ ನಮಗೆ ಅವಶ್ಯವಾದವುಗಳನ್ನು ಕೊಂಡುಕೋ, ಎಂದೋ ಬಡವರಿಗೆ ಏನಾದರೂ ಕೊಡು ಎಂದೋ ಯೇಸು ಅವನಿಗೆ ಹೇಳಿದರೆಂದು ಅವರಲ್ಲಿ ಕೆಲವರು ಭಾವಿಸಿದರು.</verse>
				<verse number="30">ಯೂದನು ಆ ರೊಟ್ಟಿಯ ತುಂಡನ್ನು ತೆಗೆದುಕೊಂಡ ಕೂಡಲೇ ಹೊರಗೆ ಹೋದನು. ಆಗ ರಾತ್ರಿಯಾಗಿತ್ತು.</verse>
				<verse number="31">ಅವನು ಹೊರಟುಹೋದ ಮೇಲೆ ಯೇಸು, “ಈಗ ಮನುಷ್ಯಪುತ್ರನಾದ ನಾನು ಮಹಿಮೆ ಹೊಂದಲಿದ್ದೇನೆ. ದೇವರೂ ನನ್ನಲ್ಲಿ ಮಹಿಮೆ ಹೊಂದುವರು.</verse>
				<verse number="32">ದೇವರು ಮನುಷ್ಯಪುತ್ರನಾದ ನನ್ನಲ್ಲಿ ಮಹಿಮೆ ಪಟ್ಟರೆ, ದೇವರು ಸಹ ಮನುಷ್ಯಪುತ್ರನಾದ ನನ್ನನ್ನು ತಮ್ಮಲ್ಲಿ ಮಹಿಮೆಪಡಿಸುವರು ಮತ್ತು ತಕ್ಷಣವೇ ಮಹಿಮೆಪಡಿಸುವರು.</verse>
				<verse number="33">“ನನ್ನ ಮಕ್ಕಳೇ, ಇನ್ನು ಸ್ವಲ್ಪ ಕಾಲವೇ ನಾನು ನಿಮ್ಮೊಡನೆ ಇರುತ್ತೇನೆ. ‘ನೀವು ನನ್ನನ್ನು ಹುಡುಕುವಿರಿ, ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದಿ ನಾಯಕರಿಗೆ ಹೇಳಿದಂತೆಯೇ ನಿಮಗೂ ಈಗ ಹೇಳುತ್ತೇನೆ.</verse>
				<verse number="34">“ನಾನು ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು.</verse>
				<verse number="35">ನಿಮಗೆ ಪರಸ್ಪರ ಪ್ರೀತಿಯಿದ್ದರೆ, ಎಲ್ಲರೂ ನಿಮ್ಮನ್ನು ನನ್ನ ಶಿಷ್ಯರೆಂದು ತಿಳಿದುಕೊಳ್ಳುವರು,” ಎಂದು ಹೇಳಿದರು.</verse>
				<verse number="36">ಸೀಮೋನ ಪೇತ್ರನು ಯೇಸುವಿಗೆ, “ಸ್ವಾಮೀ, ನೀವು ಎಲ್ಲಿಗೆ ಹೋಗುತ್ತೀರಿ?” ಎಂದು ಕೇಳಿದ್ದಕ್ಕೆ, ಯೇಸು ಅವನಿಗೆ, “ನಾನು ಹೋಗುವ ಕಡೆಗೆ ಈಗ ನೀನು ನನ್ನನ್ನು ಹಿಂಬಾಲಿಸಲಾರೆ, ನಂತರ ಹಿಂಬಾಲಿಸುವೆ,” ಎಂದರು.</verse>
				<verse number="37">ಪೇತ್ರನು ಯೇಸುವಿಗೆ, “ಕರ್ತದೇವರೇ, ನಾನು ಈಗ ನಿಮ್ಮನ್ನು ಏಕೆ ಹಿಂಬಾಲಿಸಲಾರೆನು? ನಿಮಗಾಗಿ ನನ್ನ ಪ್ರಾಣವನ್ನೇ ಕೊಡುವೆನು,” ಎಂದನು.</verse>
				<verse number="38">ಯೇಸು ಅವನಿಗೆ, “ನೀನು ನನಗಾಗಿ ನಿನ್ನ ಪ್ರಾಣವನ್ನೇ ಕೊಡುವೆಯೋ? ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ನೀನು ನನ್ನನ್ನು ಮೂರು ಸಾರಿ ನಿರಾಕರಿಸುವ ತನಕ ಹುಂಜ ಕೂಗುವುದೇ ಇಲ್ಲ,” ಎಂದರು.</verse>
			</chapter>
			<chapter number="14">
				<verse number="1">“ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ನೀವು ದೇವರನ್ನು ನಂಬಿರಿ; ನನ್ನನ್ನೂ ನಂಬಿರಿ.</verse>
				<verse number="2">ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ. ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ.</verse>
				<verse number="3">ನಾನು ಹೋಗಿ ನಿಮಗಾಗಿ ಸ್ಥಳವನ್ನು ಸಿದ್ಧಮಾಡಿದ ಮೇಲೆ ಪುನಃ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು. ಆಗ ನಾನಿರುವಲ್ಲಿ ನೀವು ಸಹ ಇರುವಿರಿ.</verse>
				<verse number="4">ನಾನು ಹೋಗುವ ಸ್ಥಳದ ಮಾರ್ಗವು ನಿಮಗೆ ತಿಳಿದಿದೆ,” ಎಂದರು.</verse>
				<verse number="5">ಆಗ ತೋಮನು ಯೇಸುವಿಗೆ, “ಸ್ವಾಮೀ, ನೀವು ಎಲ್ಲಿಗೆ ಹೋಗುತ್ತೀರೋ ನಮಗೆ ತಿಳಿಯದು. ಆದ್ದರಿಂದ ನಮಗೆ ಮಾರ್ಗವು ಹೇಗೆ ತಿಳಿದೀತು?” ಎಂದನು.</verse>
				<verse number="6">ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.</verse>
				<verse number="7">ನೀವು ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನು ಸಹ ತಿಳಿಯುತ್ತಿದ್ದೀರಿ. ಈಗಿನಿಂದ ನೀವು ತಂದೆಯನ್ನು ತಿಳಿದಿದ್ದೀರಿ ಮತ್ತು ಅವರನ್ನು ಕಂಡಿದ್ದೀರಿ,” ಎಂದು ಹೇಳಿದರು.</verse>
				<verse number="8">ಅದಕ್ಕೆ ಫಿಲಿಪ್ಪನು, “ಸ್ವಾಮೀ, ತಂದೆಯನ್ನು ನಮಗೆ ತೋರಿಸಿರಿ, ನಮಗೆ ಅಷ್ಟೇ ಸಾಕು,” ಎಂದನು.</verse>
				<verse number="9">ಯೇಸು ಅವನಿಗೆ, “ಫಿಲಿಪ್ಪನೇ, ನಾನು ಇಷ್ಟುಕಾಲ ನಿಮ್ಮೊಂದಿಗೆ ಇದ್ದರೂ ನೀನು ನನ್ನನ್ನು ತಿಳಿಯಲಿಲ್ಲ. ನನ್ನನ್ನು ನೋಡಿದವನು ತಂದೆಯನ್ನು ನೋಡಿದ್ದಾನೆ. ಹಾಗಾದರೆ, ‘ತಂದೆಯನ್ನು ನಮಗೆ ತೋರಿಸಿರಿ’ ಎಂದು ನೀನು ಕೇಳುವುದು ಹೇಗೆ?</verse>
				<verse number="10">ನಾನು ತಂದೆಯಲ್ಲಿ ಇದ್ದೇನೆ ಮತ್ತು ತಂದೆಯು ನನ್ನಲ್ಲಿ ಇದ್ದಾರೆ ಎಂದು ನೀನು ನಂಬುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಮಾತನಾಡುವುದಿಲ್ಲ; ನನ್ನಲ್ಲಿರುವ ತಂದೆಯೇ ತಮ್ಮ ಕ್ರಿಯೆಗಳನ್ನು ಮಾಡುತ್ತಾರೆ.</verse>
				<verse number="11">ನಾನು ತಂದೆಯಲ್ಲಿಯೂ ತಂದೆಯು ನನ್ನಲ್ಲಿಯೂ ಇದ್ದಾರೆಂದು ಹೇಳುವಾಗ ನೀವು ನನ್ನನ್ನು ನಂಬಿರಿ, ಇಲ್ಲದಿದ್ದರೆ ಆ ಕ್ರಿಯೆಗಳನ್ನಾದರೂ ನೀವು ನಂಬಿರಿ.</verse>
				<verse number="12">ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನನ್ನನ್ನು ನಂಬುವವರು ನಾನು ಮಾಡುವ ಕ್ರಿಯೆಗಳನ್ನು ತಾವು ಸಹ ಮಾಡುವರು. ಇವುಗಳಿಗಿಂತ ಮಹತ್ತಾದವುಗಳನ್ನು ಅವರು ಮಾಡುವರು. ಏಕೆಂದರೆ ನಾನು ನನ್ನ ತಂದೆಯ ಬಳಿಗೆ ಹೋಗುತ್ತೇನೆ.</verse>
				<verse number="13">ನನ್ನ ಹೆಸರಿನಲ್ಲಿ ನೀವು ಏನೇನು ಕೇಳಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ತಂದೆಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು.</verse>
				<verse number="14">ನೀವು ನನ್ನ ಹೆಸರಿನಲ್ಲಿ ನನ್ನನ್ನು ಏನಾದರೂ ಕೇಳಿಕೊಂಡರೆ ನಾನು ಅದನ್ನು ಮಾಡುವೆನು.</verse>
				<verse number="15">“ನೀವು ನನ್ನನ್ನು ಪ್ರೀತಿಸುವವರಾದರೆ ನನ್ನ ಆಜ್ಞೆಗಳನ್ನು ಅನುಸರಿಸುವಿರಿ.</verse>
				<verse number="16">ನಾನು ತಂದೆಯನ್ನು ಕೇಳಿಕೊಳ್ಳುವೆನು. ಆಗ ತಂದೆ ನಿಮಗೆ ಬೇರೊಬ್ಬ ಸಹಾಯಕರನ್ನು ಸದಾಕಾಲವೂ ನಿಮ್ಮೊಂದಿಗೆ ಇರುವುದಕ್ಕೆ ಕೊಡುವರು.</verse>
				<verse number="17">ಅವರೇ ಸತ್ಯದ ಆತ್ಮರಾಗಿದ್ದಾರೆ. ಲೋಕವು ಅವರನ್ನು ನೋಡದೆಯೂ ತಿಳಿಯದೆಯೂ ಇರುವುದರಿಂದ ಸತ್ಯದ ಆತ್ಮರಾಗಿರುವ ಅವರನ್ನು ಸ್ವೀಕರಿಸಲಾರದು. ನೀವು ಅವರನ್ನು ಬಲ್ಲಿರಿ. ಏಕೆಂದರೆ ಅವರು ನಿಮ್ಮೊಂದಿಗಿರುವರು ಮತ್ತು ನಿಮ್ಮೊಳಗೂ ನೆಲೆಸಿರುವರು.</verse>
				<verse number="18">ನಾನು ನಿಮ್ಮನ್ನು ಅನಾಥರನ್ನಾಗಿ ಬಿಡುವುದಿಲ್ಲ. ನಿಮ್ಮ ಬಳಿಗೆ ನಾನು ಬರುತ್ತೇನೆ.</verse>
				<verse number="19">ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ಕಾಣುವುದಿಲ್ಲ. ಆದರೆ ನೀವು ನನ್ನನ್ನು ಕಾಣುವಿರಿ. ಏಕೆಂದರೆ ನಾನು ಜೀವಿಸುವುದರಿಂದ ನೀವು ಸಹ ಜೀವಿಸುವಿರಿ.</verse>
				<verse number="20">ನಾನು ನನ್ನ ತಂದೆಯಲ್ಲಿಯೂ ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವುದನ್ನು ನೀವು ಆ ದಿನದಲ್ಲಿ ತಿಳಿದುಕೊಳ್ಳುವಿರಿ.</verse>
				<verse number="21">ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಗೊಳ್ಳುವವರೇ ನನ್ನನ್ನು ಪ್ರೀತಿಸುವವರು. ನನ್ನನ್ನು ಪ್ರೀತಿಸುವವನು ತನ್ನ ತಂದೆಗೆ ಪ್ರಿಯನಾಗಿರುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ಪ್ರಕಟಿಸಿಕೊಳ್ಳುವೆನು,” ಎಂದು ಹೇಳಿದರು.</verse>
				<verse number="22">ಇಸ್ಕರಿಯೋತ ಅಲ್ಲದ ಮತ್ತೊಬ್ಬ ಯೂದನು, “ಸ್ವಾಮೀ, ನೀವು ಲೋಕಕ್ಕೆ ಪ್ರಕಟವಾಗದೆ ನಮಗೆ ಮಾತ್ರ ಪ್ರಕಟವಾಗುವುದು ಏಕೆ?” ಎಂದು ಕೇಳಿದನು.</verse>
				<verse number="23">ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ಅವನು ನನ್ನ ವಾಕ್ಯವನ್ನು ಕೈಗೊಳ್ಳುವನು. ನನ್ನ ತಂದೆಯು ಅವನನ್ನು ಪ್ರೀತಿಸುವರು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಿವಾಸಮಾಡಿಕೊಳ್ಳುವೆವು.</verse>
				<verse number="24">ನನ್ನನ್ನು ಪ್ರೀತಿಸದವನು ನನ್ನ ವಾಕ್ಯಗಳನ್ನು ಕೈಗೊಳ್ಳುವುದಿಲ್ಲ. ನೀವು ಕೇಳಿದ ವಾಕ್ಯವು ನನ್ನ ವಾಕ್ಯಗಳಲ್ಲ. ಅವು ನನ್ನನ್ನು ಕಳುಹಿಸಿದ ನನ್ನ ತಂದೆಯ ವಾಕ್ಯಗಳಾಗಿವೆ.</verse>
				<verse number="25">“ನಾನು ಇನ್ನೂ ನಿಮ್ಮೊಡನೆ ಇರುವಾಗಲೇ ಈ ಸಂಗತಿಗಳನ್ನು ನಿಮಗೆ ಹೇಳಿದ್ದೇನೆ.</verse>
				<verse number="26">ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಸಹಾಯಕ ‘ಪವಿತ್ರಾತ್ಮರು’ ಎಲ್ಲವನ್ನೂ ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.</verse>
				<verse number="27">ನಾನು ಸಮಾಧಾನವನ್ನು ನಿಮಗೆ ಬಿಟ್ಟು ಹೋಗುತ್ತೇನೆ. ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಅಂಜದಿರಲಿ.</verse>
				<verse number="28">“ ‘ನಾನು ಹೋಗಿ ತಿರುಗಿ ನಿಮ್ಮ ಬಳಿಗೆ ಬರುತ್ತೇನೆ,’ ಎಂದು ನಾನು ನಿಮಗೆ ಹೇಳಿದ್ದನ್ನು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ತಂದೆಯ ಬಳಿಗೆ ಹೋಗುತ್ತೇನೆಂದು ಹೇಳಿದ್ದಕ್ಕೆ ಸಂತೋಷ ಪಡುತ್ತಿದ್ದಿರಿ. ಏಕೆಂದರೆ ತಂದೆಯು ನನಗಿಂತಲೂ ದೊಡ್ಡವರು.</verse>
				<verse number="29">ಅದು ನಡೆಯುವಾಗ ನೀವು ನಂಬುವಂತೆ ಇದೆಲ್ಲಾ ನಡೆಯುವುದಕ್ಕಿಂತ ಮುಂಚೆಯೇ ಈಗ ನಾನು ನಿಮಗೆ ಹೇಳಿದ್ದೇನೆ.</verse>
				<verse number="30">ಇನ್ನು ಮೇಲೆ ನಾನು ನಿಮ್ಮೊಂದಿಗೆ ಹೆಚ್ಚು ವಿಷಯಗಳನ್ನು ಮಾತನಾಡುವುದಿಲ್ಲ. ಏಕೆಂದರೆ ಇಹಲೋಕದ ಅಧಿಪತಿಯು ಬರಲಿದ್ದಾನೆ. ನನ್ನಲ್ಲಿ ಅವನಿಗೆ ಸೇರಿದ್ದು ಒಂದೂ ಇರುವುದಿಲ್ಲ.</verse>
				<verse number="31">ಆದರೆ ನಾನು ತಂದೆಯನ್ನು ಪ್ರೀತಿಸುತ್ತೇನೆಂದು ಲೋಕವು ತಿಳಿಯುವಂತೆ ತಂದೆ ನನಗೆ ಆಜ್ಞಾಪಿಸಿದಂತೆಯೇ ನಾನು ಮಾಡುತ್ತೇನೆ. “ಏಳಿರಿ, ನಾವು ಇಲ್ಲಿಂದ ಹೋಗೋಣ,” ಎಂದರು.</verse>
			</chapter>
			<chapter number="15">
				<verse number="1">“ನಾನೇ ನಿಜವಾದ ದ್ರಾಕ್ಷಿಯ ಬಳ್ಳಿ, ನನ್ನ ತಂದೆಯೇ ತೋಟಗಾರರು.</verse>
				<verse number="2">ನನ್ನಲ್ಲಿದ್ದು ಫಲವನ್ನು ಕೊಡದ ಪ್ರತಿಯೊಂದು ಕವಲುಬಳ್ಳಿಯನ್ನು ತಂದೆ ಮೇಲಕ್ಕೆ ಎತ್ತಿಡುವರು. ಆದರೆ ಫಲಕೊಡುವ ಪ್ರತಿಯೊಂದು ಕವಲುಬಳ್ಳಿಯು ಹೆಚ್ಚು ಫಲಕೊಡುವಂತೆ ಅದನ್ನು ಕತ್ತರಿಸಿ ಶುದ್ಧ ಮಾಡುತ್ತಾರೆ.</verse>
				<verse number="3">ನಾನು ನಿಮಗೆ ಹೇಳಿದ ವಾಕ್ಯದ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ.</verse>
				<verse number="4">ನಾನು ನಿಮ್ಮಲ್ಲಿ ನೆಲೆಗೊಂಡಿರುವ ಹಾಗೇ ನನ್ನಲ್ಲಿ ನೆಲೆಗೊಂಡಿರಿ. ಕವಲುಬಳ್ಳಿಯು ದ್ರಾಕ್ಷಿಯ ಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲ್ಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.</verse>
				<verse number="5">“ನಾನೇ ದ್ರಾಕ್ಷಿಯ ಬಳ್ಳಿ, ನೀವು ಕವಲುಬಳ್ಳಿಗಳು. ನೀವು ನನ್ನಲ್ಲಿ ಮತ್ತು ನಾನು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಬಹಳ ಫಲಕೊಡುವಿರಿ. ಏಕೆಂದರೆ ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.</verse>
				<verse number="6">ನೀವು ನನ್ನಲ್ಲಿ ನೆಲೆಗೊಂಡಿರದಿದ್ದರೆ ನೀವು ಎಸೆಯಲಾದ ಕವಲುಬಳ್ಳಿಯಂತೆ ಒಣಗಿ ಹೋಗುವಿರಿ. ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು ಮತ್ತು ಅವುಗಳನ್ನು ಸುಟ್ಟುಹಾಕಲಾಗುವುದು.</verse>
				<verse number="7">ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಬಯಸುವ ಯಾವುದನ್ನಾದರೂ ಬೇಡಿಕೊಳ್ಳಿರಿ. ಅದು ನಿಮ್ಮದಾಗುವುದು.</verse>
				<verse number="8">ನೀವು ಬಹಳ ಫಲಕೊಡುವುದರಿಂದಲೇ ನನ್ನ ಶಿಷ್ಯರಾಗಿರುವಿರಿ, ಇದರಿಂದ ನನ್ನ ತಂದೆಗೆ ಮಹಿಮೆಯಾಗುವುದು.</verse>
				<verse number="9">“ತಂದೆಯು ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ಈಗ ನೀವು ನನ್ನ ಪ್ರೀತಿಯಲ್ಲಿ ನೆಲೆಗೊಂಡಿರಿ.</verse>
				<verse number="10">ನಾನು ನನ್ನ ತಂದೆಯ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನೆಲೆಗೊಂಡಿರುವಂತೆಯೇ ನೀವು ನನ್ನ ಆಜ್ಞೆಗಳನ್ನು ಪಾಲಿಸಿ ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಳ್ಳುವಿರಿ.</verse>
				<verse number="11">ನನ್ನ ಆನಂದವು ನಿಮ್ಮಲ್ಲಿ ಇರುವಂತೆಯೂ ಆ ನಿಮ್ಮ ಆನಂದವು ಪರಿಪೂರ್ಣವಾಗುವಂತೆಯೂ ನಾನು ಇವುಗಳನ್ನು ನಿಮಗೆ ಹೇಳಿದ್ದೇನೆ.</verse>
				<verse number="12">ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದು ನನ್ನ ಆಜ್ಞೆಯಾಗಿದೆ.</verse>
				<verse number="13">ಒಬ್ಬನು ತನ್ನ ಸ್ನೇಹಿತರಿಗಾಗಿ ತನ್ನ ಪ್ರಾಣವನ್ನೇ ಕೊಡುವ ಪ್ರೀತಿಗಿಂತ ಮಹತ್ತಾದದ್ದು ಯಾರಲ್ಲೂ ಇಲ್ಲ.</verse>
				<verse number="14">ನಾನು ನಿಮಗೆ ಆಜ್ಞಾಪಿಸಿದ್ದನ್ನು ಪಾಲಿಸಿದರೆ ನೀವು ನನ್ನ ಸ್ನೇಹಿತರು.</verse>
				<verse number="15">ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ. ಏಕೆಂದರೆ ತನ್ನ ಧಣಿಯು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.</verse>
				<verse number="16">ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.</verse>
				<verse number="17">ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆಯಾಗಿದೆ.</verse>
				<verse number="18">“ಲೋಕವು ನಿಮ್ಮನ್ನು ದ್ವೇಷಿಸಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಿಸಿತು ಎಂದು ನೀವು ತಿಳಿಯಿರಿ.</verse>
				<verse number="19">ನೀವು ಲೋಕದವರಾಗಿದ್ದರೆ ಲೋಕವು ನಿಮ್ಮನ್ನು ಪ್ರೀತಿಸುತ್ತಿತ್ತು. ಆದರೆ ನೀವು ಲೋಕದವರಲ್ಲದೆ ಇರುವುದರಿಂದಲೂ ನಾನು ಲೋಕದೊಳಗಿಂದ ನಿಮ್ಮನ್ನು ಆರಿಸಿಕೊಂಡದ್ದರಿಂದಲೂ ಲೋಕವು ನಿಮ್ಮನ್ನು ದ್ವೇಷಿಸುತ್ತದೆ.</verse>
				<verse number="20">‘ಧಣಿಗಿಂತ ಆಳು ದೊಡ್ಡವನಲ್ಲ,’ ಎಂದು ನಾನು ನಿಮಗೆ ಹೇಳಿದ ಮಾತನ್ನು ನೆನಪಿಗೆ ತಂದುಕೊಳ್ಳಿರಿ. ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸೆಪಡಿಸುವರು. ಅವರು ನನ್ನ ಮಾತನ್ನು ಅನುಸರಿಸಿದರೆ ನಿಮ್ಮ ಮಾತನ್ನು ಸಹ ಅನುಸರಿಸುವರು.</verse>
				<verse number="21">ಆದರೆ ಅವರು ನನ್ನನ್ನು ಕಳುಹಿಸಿದ ತಂದೆಯನ್ನು ತಿಳಿಯದಿರುವುದರಿಂದಲೇ ನನ್ನ ಹೆಸರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.</verse>
				<verse number="22">ನಾನು ಬಂದು ಅವರೊಂದಿಗೆ ಮಾತನಾಡದಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರ ಪಾಪದ ವಿಷಯವಾಗಿ ಅವರಿಗೆ ನೆಪವಿಲ್ಲ.</verse>
				<verse number="23">ನನ್ನನ್ನು ದ್ವೇಷಿಸುವವರು ನನ್ನ ತಂದೆಯನ್ನು ಸಹ ದ್ವೇಷಿಸುತ್ತಾರೆ.</verse>
				<verse number="24">ಬೇರೆ ಯಾರೂ ಮಾಡದ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆ ಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಕ್ರಿಯೆಗಳನ್ನು ಕಂಡೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಮಾಡಿದ್ದಾರೆ.</verse>
				<verse number="25">ಆದರೆ, ‘ಅವರು ನನ್ನನ್ನು ನಿಷ್ಕಾರಣವಾಗಿ ದ್ವೇಷಮಾಡಿದರು,’ ಎಂದು ಅವರ ನಿಯಮದಲ್ಲಿ ಬರೆದಿರುವ ಮಾತು ನೆರವೇರುವಂತೆ ಹೀಗಾಯಿತು.</verse>
				<verse number="26">“ಆದರೂ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವ ಆ ಸಹಾಯಕರೊಬ್ಬರು ನಿಮ್ಮ ಬಳಿಗೆ ಬರುವರು. ಆಗ ತಂದೆಯಿಂದ ಬರುವ ಆ ಸತ್ಯದ ಆತ್ಮವಾಗಿರುವವರೇ ನನ್ನ ವಿಷಯವಾಗಿ ಸಾಕ್ಷಿಕೊಡುವರು.</verse>
				<verse number="27">ನೀವು ಪ್ರಾರಂಭದಿಂದಲೂ ನನ್ನ ಸಂಗಡ ಇದ್ದುದರಿಂದ ನೀವು ಸಹ ನನಗೆ ಸಾಕ್ಷಿಗಳಾಗಿದ್ದೀರಿ.</verse>
			</chapter>
			<chapter number="16">
				<verse number="1">“ನೀವು ನಂಬಿಕೆಯಲ್ಲಿ ಎಡವಿಬಿದ್ದು ಹೋಗಬಾರದೆಂದು ನಾನು ಇವುಗಳನ್ನು ಹೇಳಿದ್ದೇನೆ.</verse>
				<verse number="2">ಜನರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು. ಆದರೆ ನಿಮ್ಮನ್ನು ಕೊಲ್ಲುವವರು ದೇವರಿಗೆ ಸೇವೆ ಸಲ್ಲಿಸುತ್ತಾರೆಂದು ಭಾವಿಸುವ ಸಮಯ ಬರುತ್ತದೆ.</verse>
				<verse number="3">ಅವರು ತಂದೆಯನ್ನಾಗಲಿ ನನ್ನನ್ನಾಗಲಿ ತಿಳಿಯದ ಕಾರಣ ಇವೆಲ್ಲವುಗಳನ್ನು ಮಾಡುವರು.</verse>
				<verse number="4">ಆದರೆ ಅವರ ಸಮಯ ಬಂದಾಗ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆಂದು ನೀವು ಜ್ಞಾಪಕ ಮಾಡಿಕೊಳ್ಳುವಂತೆ ಮುಂಚಿತವಾಗಿಯೇ ನಿಮಗೆ ಹೇಳಿದ್ದೇನೆ. ನಾನು ನಿಮ್ಮ ಸಂಗಡ ಇದ್ದುದರಿಂದ ಇವುಗಳನ್ನು ಪ್ರಾರಂಭದಲ್ಲೇ ನಿಮಗೆ ಹೇಳಲಿಲ್ಲ.</verse>
				<verse number="5">ಈಗ ನನ್ನನ್ನು ಕಳುಹಿಸಿದ ತಂದೆಯ ಬಳಿಗೆ ನಾನು ಹೋಗುತ್ತೇನೆ. ನಿಮ್ಮಲ್ಲಿ ಯಾರೂ, ‘ನೀವು ಎಲ್ಲಿಗೆ ಹೋಗುತ್ತೀರಿ?’ ಎಂದು ನನ್ನನ್ನು ಕೇಳಲಿಲ್ಲ.</verse>
				<verse number="6">ಆದರೆ ಇವುಗಳನ್ನು ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ.</verse>
				<verse number="7">ಆದರೂ ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ ಸಹಾಯಕರು ನಿಮ್ಮ ಬಳಿಗೆ ಬರುವುದಿಲ್ಲ. ನಾನು ಹೋದರೆ ಅವರನ್ನು ನಿಮ್ಮ ಬಳಿಗೆ ಕಳುಹಿಸುವೆನು.</verse>
				<verse number="8">ಆ ಸಹಾಯಕರು ಬಂದಾಗ ಪಾಪ, ನೀತಿ ಮತ್ತು ನ್ಯಾಯತೀರ್ಪಿನ ವಿಷಯಗಳಲ್ಲಿ ಲೋಕದವರಿಗೆ ಮನವರಿಕೆಯನ್ನು ಮಾಡುವರು.</verse>
				<verse number="9">ಜನರು ನನ್ನನ್ನು ನಂಬದೆ ಇರುವ ಕಾರಣದಿಂದ, ಪಾಪದ ವಿಷಯವಾಗಿಯೂ</verse>
				<verse number="10">ನಾನು ನನ್ನ ತಂದೆಯ ಬಳಿಗೆ ಹೋಗುವುದರಿಂದ ನೀವು ನನ್ನನ್ನು ಎಂದಿಗೂ ನೋಡದ ಕಾರಣದಿಂದ, ನೀತಿಯ ವಿಷಯವಾಗಿಯೂ</verse>
				<verse number="11">ಇಹಲೋಕಾಧಿಪತಿಗೆ ನ್ಯಾಯತೀರ್ಪಾದ ಕಾರಣದಿಂದ ನ್ಯಾಯತೀರ್ಪಿನ ವಿಷಯವಾಗಿಯೂ ಮನವರಿಕೆ ಮಾಡುವರು.</verse>
				<verse number="12">“ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ. ಆದರೆ ನೀವು ಈಗ ಅವುಗಳನ್ನು ತಾಳಿಕೊಳ್ಳಲಾರಿರಿ.</verse>
				<verse number="13">ಆದರೆ ಸತ್ಯದ ಆತ್ಮ ಬಂದಾಗ ಅವರು ನಿಮ್ಮನ್ನು ಎಲ್ಲಾ ಸತ್ಯದೊಳಗೆ ನಡೆಸುವರು. ಅವರು ತಮ್ಮಷ್ಟಕ್ಕೆ ತಾವೇ ಮಾತನಾಡದೆ ತಾವು ಕೇಳಿದವುಗಳನ್ನೇ ಮಾತನಾಡುವರು. ಮುಂದೆ ನಡೆಯಲಿರುವ ವಿಷಯಗಳನ್ನು ಅವರು ನಿಮಗೆ ಪ್ರಕಟಿಸುವರು.</verse>
				<verse number="14">ಅವರು ನನ್ನನ್ನು ಮಹಿಮೆಪಡಿಸುವರು. ಏಕೆಂದರೆ ಅವರು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ಪ್ರಕಟಿಸುವರು.</verse>
				<verse number="15">ತಂದೆಗೆ ಇರುವುದೆಲ್ಲವೂ ನನ್ನದೆ. ಆದ್ದರಿಂದಲೇ, ‘ಪವಿತ್ರಾತ್ಮ ದೇವರು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ಪ್ರಕಟಿಸುವರು,’ ಎಂದು ನಾನು ಹೇಳಿದೆನು.”</verse>
				<verse number="16">“ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ಕಾಣುವುದಿಲ್ಲ. ಅನಂತರ ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ಕಾಣುವಿರಿ,” ಎಂದರು.</verse>
				<verse number="17">ಆಗ ಅವರ ಶಿಷ್ಯರಲ್ಲಿ ಕೆಲವರು, “ಇವರು ನಮಗೆ ಹೇಳುವುದೇನು? ‘ಸ್ವಲ್ಪಕಾಲ ನೀವು ನನ್ನನ್ನು ಕಾಣುವುದಿಲ್ಲ ಮತ್ತು ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ಕಾಣುವಿರಿ ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ,’ ಎನ್ನುತ್ತಾರಲ್ಲಾ?</verse>
				<verse number="18">ಇವರು ಹೇಳುವುದರ ಅರ್ಥವೇನು? ‘ಸ್ವಲ್ಪಕಾಲ’ ಎಂದು ಹೇಳುತ್ತಾರಲ್ಲ? ಇವರು ಏನು ಮಾತನಾಡುತ್ತಾರೋ ನಮಗೆ ತಿಳಿಯದು,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.</verse>
				<verse number="19">ಶಿಷ್ಯರು ತಮ್ಮ ಬಗ್ಗೆ ಪ್ರಶ್ನಿಸಬಯಸುತ್ತಿದ್ದಾರೆಂದು ತಿಳಿದು ಯೇಸು, “ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ಕಾಣುವುದಿಲ್ಲ, ‘ಸ್ವಲ್ಪ ಕಾಲವಾದ ಮೇಲೆ ನೀವು ಪುನಃ ನನ್ನನ್ನು ಕಾಣುವಿರಿ ಎಂದು ನಾನು ನಿಮಗೆ ಹೇಳಿದ್ದರ ಕುರಿತಾಗಿ ನೀವು ಒಬ್ಬರಿಗೊಬ್ಬರು ವಿಚಾರಿಸಿಕೊಳ್ಳುತ್ತೀರೋ?’</verse>
				<verse number="20">ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ಅತ್ತು ಗೋಳಾಡುವಿರಿ. ಆದರೆ ಲೋಕವು ಸಂತೋಷಿಸುವುದು; ನೀವು ದುಃಖಿಸುವಿರಿ ಆದರೆ ನಿಮ್ಮ ದುಃಖವು ಆನಂದವಾಗಿ ಮಾರ್ಪಡುವುದು.</verse>
				<verse number="21">ಒಬ್ಬ ಸ್ತ್ರೀಗೆ ಪ್ರಸವ ಗಳಿಗೆ ಬಂದಾಗ ದುಃಖವಿರುವುದು. ಆದರೆ ಆಕೆಯು ಮಗುವನ್ನು ಹೆತ್ತಾಗ ಈ ಲೋಕದೊಳಗೆ ಒಂದು ಮಗು ಹುಟ್ಟಿತೆಂದು ಆನಂದದಿಂದ ಆ ವೇದನೆಯನ್ನು ಆಕೆಯು ಇನ್ನು ನೆನಪಿಗೆ ತಂದುಕೊಳ್ಳುವುದಿಲ್ಲ.</verse>
				<verse number="22">ಈಗ ನಿಮಗೆ ನಿಜವಾಗಿಯೂ ದುಃಖವಿದೆ. ಆದರೆ ನಾನು ನಿಮ್ಮನ್ನು ತಿರುಗಿ ಕಾಣುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವುದು. ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವುದಿಲ್ಲ.</verse>
				<verse number="23">ಆ ದಿನದಲ್ಲಿ ನೀವು ನನ್ನನ್ನು ಏನೂ ಪ್ರಶ್ನಿಸುವುದಿಲ್ಲ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.</verse>
				<verse number="24">ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ನೀವು ಪಡೆದುಕೊಳ್ಳುವಿರಿ. ಆಗ ನಿಮ್ಮ ಆನಂದವು ಪರಿಪೂರ್ಣವಾಗಿರುವುದು.</verse>
				<verse number="25">“ಇವುಗಳನ್ನು ನಾನು ಸೂಚಕವಾಗಿ ನಿಮ್ಮೊಡನೆ ಮಾತನಾಡಿದ್ದೇನೆ. ನಾನು ಇನ್ನು ಸಾಮ್ಯಗಳಿಂದ ಮಾತನಾಡದೆ ತಂದೆಯ ವಿಷಯವಾಗಿ ನಿಮಗೆ ಸ್ಪಷ್ಟವಾಗಿ ಪ್ರಕಟಿಸುವ ಗಳಿಗೆಯು ಬರುತ್ತದೆ.</verse>
				<verse number="26">ಆ ದಿವಸದಲ್ಲಿ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವಿರಿ. ನಿಮ್ಮ ವಿಷಯವಾಗಿ ತಂದೆಯನ್ನು ಕೇಳಿಕೊಳ್ಳುವೆನೆಂದು ನಾನು ನಿಮಗೆ ಹೇಳುವುದಿಲ್ಲ.</verse>
				<verse number="27">ಏಕೆಂದರೆ ನೀವು ನನ್ನನ್ನು ಪ್ರೀತಿಸಿ ನಾನು ದೇವರಿಂದ ಹೊರಟು ಬಂದವನೆಂದು ನಂಬಿದ್ದರಿಂದ ತಂದೆಯು ತಾವೇ ನಿಮ್ಮನ್ನು ಪ್ರೀತಿಸುತ್ತಾರೆ.</verse>
				<verse number="28">ನಾನು ತಂದೆಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ತಿರುಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತಿದ್ದೇನೆ,” ಎಂದರು.</verse>
				<verse number="29">ಆಗ ಶಿಷ್ಯರು ಯೇಸುವಿಗೆ, “ಇಗೋ, ಈಗ ನೀವು ಸಾಮ್ಯಗಳಿಂದ ಮಾತನಾಡದೆ ಸ್ಪಷ್ಟವಾಗಿಯೇ ಮಾತನಾಡುತ್ತಿದ್ದೀರಿ.</verse>
				<verse number="30">ನೀವು ಎಲ್ಲಾ ತಿಳಿದವರೆಂದೂ ಯಾರೂ ನಿಮ್ಮನ್ನು ಪ್ರಶ್ನಿಸುವುದು ಅಗತ್ಯವಿಲ್ಲವೆಂದು ಈಗ ನಮಗೆ ತಿಳಿಯಿತು. ಆದ್ದರಿಂದ ನೀವು ದೇವರಿಂದ ಹೊರಟು ಬಂದವರೆಂದು ನಾವು ನಂಬುತ್ತೇವೆ,” ಎಂದರು.</verse>
				<verse number="31">ಅದಕ್ಕೆ ಯೇಸು ಅವರಿಗೆ, “ಈಗ ನೀವು ನಂಬುತ್ತೀರೋ?”</verse>
				<verse number="32">ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ನಿಮ್ಮ ನಿಮ್ಮ ಮನೆಗೆ ಚದುರಿಹೋಗಿ ನನ್ನನ್ನು ಒಬ್ಬಂಟಿಗನನ್ನಾಗಿ ಬಿಡುವ ಗಳಿಗೆ ಬರುತ್ತದೆ. ಹೌದು, ಈಗಲೇ ಬಂದಿದೆ. ಆದರೂ ನಾನು ಒಬ್ಬಂಟಿಗನಲ್ಲ. ಏಕೆಂದರೆ ತಂದೆ ನನ್ನ ಸಂಗಡ ಇದ್ದಾರೆ.</verse>
				<verse number="33">“ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ,” ಎಂದರು.</verse>
			</chapter>
			<chapter number="17">
				<verse number="1">ಯೇಸು ಇಷ್ಟೆಲ್ಲಾ ಮಾತನಾಡಿ ಆಕಾಶದ ಕಡೆಗೆ ಕಣ್ಣೆತ್ತಿ ನೋಡಿ, “ತಂದೆಯೇ, ಸಮಯ ಬಂದಿದೆ. ನಿಮ್ಮ ಪುತ್ರನು ನಿಮ್ಮನ್ನು ಮಹಿಮೆಪಡಿಸುವುದಕ್ಕಾಗುವಂತೆ ಆತನನ್ನು ಮಹಿಮೆಪಡಿಸಿರಿ.</verse>
				<verse number="2">ನೀವು ಎಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವಿರಿ.</verse>
				<verse number="3">ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.</verse>
				<verse number="4">ಮಾಡಬೇಕೆಂದು ನೀವು ನನಗೆ ಕೊಟ್ಟ ಕೆಲಸವನ್ನು ನಾನು ನೆರವೇರಿಸಿ ಭೂಮಿಯ ಮೇಲೆ ನಾನು ನಿಮ್ಮನ್ನು ಮಹಿಮೆಪಡಿಸಿದ್ದೇನೆ.</verse>
				<verse number="5">ತಂದೆಯೇ, ಲೋಕವು ಉಂಟಾಗುವದಕ್ಕಿಂತ ಮುಂಚೆ ನಿಮ್ಮೊಡನೆ ನನಗಿದ್ದ ಮಹಿಮೆಯಿಂದ ಈಗ ನೀವು ನನ್ನನ್ನು ಮಹಿಮೆಪಡಿಸಿರಿ.</verse>
				<verse number="6">“ಲೋಕದೊಳಗಿಂದ ನೀವು ನನಗೆ ಕೊಟ್ಟ ಈ ನನ್ನ ಶಿಷ್ಯರಿಗೆ ನಾನು ನಿಮ್ಮ ಹೆಸರನ್ನು ಪ್ರಕಟಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ನೀವು ಇವರನ್ನು ನನಗೆ ಕೊಟ್ಟಿದ್ದೀರಿ. ಇವರು ನಿಮ್ಮ ವಾಕ್ಯವನ್ನು ಕೈಗೊಂಡಿದ್ದಾರೆ.</verse>
				<verse number="7">ನೀವು ನನಗೆ ಕೊಟ್ಟಿದ್ದೆಲ್ಲವೂ ನಿಮ್ಮಿಂದಲೇ ಬಂದಿವೆ ಎಂದು ಈಗ ಇವರು ತಿಳಿದುಕೊಂಡಿದ್ದಾರೆ.</verse>
				<verse number="8">ಏಕೆಂದರೆ ನೀವು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ, ಇವರು ಅಂಗೀಕರಿಸಿದ್ದಾರೆ ಮತ್ತು ನಾನು ನಿಮ್ಮ ಬಳಿಯಿಂದ ಬಂದವನೆಂದು ಇವರು ನಿಶ್ಚಯವಾಗಿ ತಿಳಿದು, ನೀವೇ ನನ್ನನ್ನು ಕಳುಹಿಸಿದ್ದೀರಿ, ಎಂದು ನಂಬಿದ್ದಾರೆ.</verse>
				<verse number="9">ನಾನು ಇವರಿಗಾಗಿಯೇ ಬೇಡಿಕೊಳ್ಳುತ್ತೇನೆ. ನೀವು ನನಗೆ ಕೊಟ್ಟವರಿಗಾಗಿಯೇ ಹೊರತು ನಾನು ಲೋಕಕ್ಕಾಗಿ ಬೇಡಿಕೊಳ್ಳುವುದಿಲ್ಲ. ಏಕೆಂದರೆ ಇವರು ನಿಮ್ಮವರು.</verse>
				<verse number="10">ನನ್ನದೆಲ್ಲವೂ ನಿಮ್ಮದೇ. ನಿಮ್ಮದೆಲ್ಲವೂ ನನ್ನದೇ. ಇವರಿಂದ ನನಗೆ ಮಹಿಮೆ ಉಂಟಾಗಿದೆ.</verse>
				<verse number="11">ಇನ್ನು ಮೇಲೆ ನಾನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತೇನೆ. ಪರಿಶುದ್ಧ ತಂದೆಯೇ, ನಾವು ಒಂದಾಗಿರುವಂತೆಯೇ ಇವರೂ ಒಂದಾಗಿರಬೇಕೆಂದು ನೀವು ನನಗೆ ಕೊಟ್ಟ ನಿಮ್ಮ ಹೆಸರಿನ ಶಕ್ತಿಯಿಂದ ಇವರನ್ನು ಕಾಪಾಡಿರಿ.</verse>
				<verse number="12">ನಾನು ಇವರೊಡನೆ ಇದ್ದಾಗ ನೀವು ನನಗೆ ಕೊಟ್ಟ ನಿಮ್ಮ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಪವಿತ್ರ ವಾಕ್ಯವು ನೆರವೇರುವಂತೆ ಆ ನಾಶದ ಮಗನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.</verse>
				<verse number="13">“ಈಗ ನಾನು ನಿಮ್ಮ ಬಳಿಗೆ ಬರುತ್ತೇನೆ. ನನ್ನ ಆನಂದವು ಅವರಲ್ಲಿ ಪರಿಪೂರ್ಣವಾಗುವಂತೆ ನಾನು ಲೋಕದಲ್ಲಿ ಇದ್ದು ಇವೆಲ್ಲವನ್ನು ಮಾತನಾಡುತ್ತೇನೆ.</verse>
				<verse number="14">ನಾನು ನಿಮ್ಮ ವಾಕ್ಯವನ್ನು ಇವರಿಗೆ ಕೊಟ್ಟಿದ್ದೇನೆ. ಇವರು ನನ್ನಂತೆ ಲೋಕದವರಲ್ಲದ ಕಾರಣ ಲೋಕವು ಇವರನ್ನು ದ್ವೇಷಿಸುತ್ತದೆ.</verse>
				<verse number="15">ನೀವು ಇವರನ್ನು ಲೋಕದಿಂದ ತೆಗೆಯಬೇಕೆಂದು ಬೇಡಿಕೊಳ್ಳದೆ ಇವರನ್ನು ಕೆಡುಕನಿಂದ ಕಾಪಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ.</verse>
				<verse number="16">ನಾನು ಲೋಕದವನಲ್ಲದೆ ಇರುವಂತೆ ಇವರೂ ಲೋಕದವರಲ್ಲ.</verse>
				<verse number="17">ನೀವು ಸತ್ಯದಿಂದ ಇವರನ್ನು ಸಮರ್ಪಿಸಿರಿ. ನಿಮ್ಮ ವಾಕ್ಯವೇ ಸತ್ಯವು.</verse>
				<verse number="18">ನೀವು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ.</verse>
				<verse number="19">ಇವರು ನಿಜವಾಗಿಯೂ ಸಮರ್ಪಿತರಾಗಬೇಕೆಂದು ನನ್ನನ್ನು ನಾನೇ ಇವರಿಗೋಸ್ಕರ ಸಮರ್ಪಿಸಿಕೊಳ್ಳುತ್ತೇನೆ.</verse>
				<verse number="20">“ಆದರೆ ಇವರಿಗಾಗಿ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನಲ್ಲಿ ನಂಬುವವರಿಗಾಗಿಯೂ ಬೇಡಿಕೊಳ್ಳುತ್ತೇನೆ.</verse>
				<verse number="21">ತಂದೆಯೇ, ನೀವು ನನ್ನನ್ನು ಕಳುಹಿಸಿದ್ದೀರಿ ಎಂದು ಲೋಕವು ನಂಬುವುದಕ್ಕಾಗಿ ಅವರೆಲ್ಲರೂ ಒಂದಾಗಿರಬೇಕೆಂತಲೂ ತಂದೆಯೇ, ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವ ಹಾಗೆಯೇ ಅವರು ಸಹ ನಮ್ಮಲ್ಲಿ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ.</verse>
				<verse number="22">ನಾವು ಒಂದಾಗಿರುವ ಹಾಗೆಯೇ ಇವರೂ ಒಂದಾಗಿರುವಂತೆ ನೀವು ನನಗೆ ಕೊಟ್ಟ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.</verse>
				<verse number="23">ಹೀಗೆ ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣವಾಗಿರಲಿ. ಆಗ ನೀವು ನನ್ನನ್ನು ಕಳುಹಿಸಿದ್ದೀರಿ ಎಂದೂ ನನ್ನನ್ನು ಪ್ರೀತಿಸಿದಂತೆ ಇವರನ್ನು ನೀವು ಪ್ರೀತಿಸಿದ್ದೀರಿ ಎಂದೂ ಲೋಕವು ತಿಳಿದುಕೊಳ್ಳುವುದು.</verse>
				<verse number="24">“ತಂದೆಯೇ, ನೀವು ನನಗೆ ಕೊಟ್ಟವರು ನಾನಿರುವಲ್ಲಿಯೇ ನನ್ನೊಂದಿಗೆ ಇದ್ದುಕೊಂಡು ಜಗದುತ್ಪತ್ತಿಗೆ ಮುಂಚೆ ನೀವು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ಇವರು ಕಾಣಬೇಕೆಂದು ನಾನು ಅಪೇಕ್ಷಿಸುತ್ತೇನೆ.</verse>
				<verse number="25">“ನೀತಿಯುಳ್ಳ ತಂದೆಯೇ, ಲೋಕವು ನಿಜವಾಗಿಯೂ ನಿಮ್ಮನ್ನು ತಿಳಿಯಲಿಲ್ಲ. ಆದರೆ ನಾನು ನಿಮ್ಮನ್ನು ತಿಳಿದಿದ್ದೇನೆ ಮತ್ತು ನೀವೇ ನನ್ನನ್ನು ಕಳುಹಿಸಿದ್ದೀರಿ ಎಂದು ಇವರು ತಿಳಿದಿದ್ದಾರೆ.</verse>
				<verse number="26">ನೀವು ನನ್ನನ್ನು ಪ್ರೀತಿಸಿದಂಥ ಪ್ರೀತಿಯು ಇವರಲ್ಲಿ ಇರಬೇಕೆಂತಲೂ ನಾನು ಅವರಲ್ಲಿ ಇರುವಂತೆಯೂ ನಾನು ಅವರಿಗೆ ನಿಮ್ಮ ಹೆಸರನ್ನು ತಿಳಿಸಿದ್ದೇನೆ, ಇನ್ನೂ ತಿಳಿಸುವೆನು,” ಎಂದರು.</verse>
			</chapter>
			<chapter number="18">
				<verse number="1">ಯೇಸು ಪ್ರಾರ್ಥನೆಯನ್ನು ಮುಗಿಸಿದ ಮೇಲೆ ತಮ್ಮ ಶಿಷ್ಯರೊಂದಿಗೆ ಕೆದ್ರೋನ್ ಹಳ್ಳದ ಆಚೆಗೆ ಹೋದರು. ಮತ್ತೊಂದು ಕಡೆ ಇರುವ ತೋಟದೊಳಗೆ ಯೇಸು ಮತ್ತು ಅವರ ಶಿಷ್ಯರು ಪ್ರವೇಶಿಸಿದರು.</verse>
				<verse number="2">ಅವರನ್ನು ಹಿಡಿದುಕೊಡಲಿದ್ದ ಯೂದನಿಗೂ ಆ ಸ್ಥಳವು ಗೊತ್ತಿತ್ತು. ಏಕೆಂದರೆ ಅನೇಕ ಸಾರಿ ಯೇಸು ತಮ್ಮ ಶಿಷ್ಯರೊಂದಿಗೆ ಅಲ್ಲಿ ಸೇರುತ್ತಿದ್ದರು.</verse>
				<verse number="3">ಯೂದನು ಸೈನಿಕರ ತಂಡವನ್ನೂ ಮುಖ್ಯಯಾಜಕರಿಂದ ಮತ್ತು ಫರಿಸಾಯರಿಂದ ಕಾವಲಾಳುಗಳನ್ನೂ ಕರೆದುಕೊಂಡು ತೋಟಕ್ಕೆ ಬಂದನು. ಸೈನಿಕರು ಮತ್ತು ಕಾವಲಾಳುಗಳು ದೀಪಗಳನ್ನು, ಪಂಜುಗಳನ್ನು ಮತ್ತು ಆಯುಧಗಳನ್ನು ಹಿಡಿದುಕೊಂಡಿದ್ದರು.</verse>
				<verse number="4">ಆಗ ಯೇಸು ತಮಗೆ ಸಂಭವಿಸುವುದನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ, “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು,</verse>
				<verse number="5">ಅವರು ಯೇಸುವಿಗೆ, “ನಜರೇತಿನ ಯೇಸುವನ್ನು,” ಎಂದರು. ಅದಕ್ಕೆ ಯೇಸು ಅವರಿಗೆ, “ನಾನೇ ಆತನು,” ಎಂದರು. ಅವರನ್ನು ಹಿಡಿದುಕೊಡಲಿದ್ದ ಯೂದನು ಸಹ ಅವರೊಂದಿಗೆ ನಿಂತಿದ್ದನು.</verse>
				<verse number="6">ಯೇಸು ಅವರಿಗೆ, “ನಾನೇ ಆತನು,” ಎಂದು ಹೇಳಿದಾಗ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು.</verse>
				<verse number="7">ಆಗ ಯೇಸು ಅವರಿಗೆ ತಿರುಗಿ, “ನೀವು, ಯಾರನ್ನು ಹುಡುಕುತ್ತೀರಿ?” ಎಂದು ಕೇಳಲು, ಅವರು, “ನಜರೇತಿನ ಯೇಸುವನ್ನು,” ಎಂದರು.</verse>
				<verse number="8">ಅದಕ್ಕೆ ಯೇಸು, “ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ, ನೀವು ನನ್ನನ್ನೇ ಹುಡುಕುವುದಾದರೆ ಇವರನ್ನು ಬಿಟ್ಟುಬಿಡಿರಿ,” ಎಂದರು.</verse>
				<verse number="9">ಹೀಗೆ, “ನೀನು ನನಗೆ ಕೊಟ್ಟವರಲ್ಲಿ ಯಾರನ್ನೂ ನಾನು ಕಳೆದುಕೊಳ್ಳಲಿಲ್ಲ,” ಎಂದು ತಾವೇ ಹೇಳಿದ ಮಾತು ನೆರವೇರಿತು.</verse>
				<verse number="10">ಆಗ ಸೀಮೋನ ಪೇತ್ರನು ತನ್ನಲ್ಲಿದ್ದ ಕತ್ತಿಯನ್ನು ತೆಗೆದು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು. ಆ ಸೇವಕನ ಹೆಸರು ಮಲ್ಕ.</verse>
				<verse number="11">ಆಗ ಯೇಸು ಪೇತ್ರನಿಗೆ, “ನಿನ್ನ ಕತ್ತಿಯನ್ನು ಒರೆಯಲ್ಲಿ ಹಾಕು! ನನ್ನ ತಂದೆಯು ನನಗೆ ಕೊಟ್ಟ ಪಾತ್ರೆಯಿಂದ ನಾನು ಕುಡಿಯಬಾರದೋ?” ಎಂದು ಹೇಳಿದರು.</verse>
				<verse number="12">ತರುವಾಯ ಸೈನಿಕರೂ ಸೈನ್ಯಾಧಿಕಾರಿಯೂ ಯೆಹೂದ್ಯರ ಕಾವಲಾಳುಗಳೂ ಯೇಸುವನ್ನು ಹಿಡಿದು ಕಟ್ಟಿದರು.</verse>
				<verse number="13">ಅವರನ್ನು ಮೊದಲು ಅನ್ನನ ಬಳಿಗೆ ಕರೆದುಕೊಂಡು ಹೋದರು. ಅವನು ಆ ವರ್ಷದ ಮಹಾಯಾಜಕನಾಗಿದ್ದ ಕಾಯಫನ ಮಾವನಾಗಿದ್ದನು.</verse>
				<verse number="14">“ಜನರಿಗೋಸ್ಕರ ಒಬ್ಬ ಮನುಷ್ಯನು ಸಾಯುವುದು ಹಿತ,” ಎಂದು ಯೆಹೂದ್ಯರಿಗೆ ಸಲಹೆ ಕೊಟ್ಟ ಕಾಯಫನು ಇವನೇ.</verse>
				<verse number="15">ಸೀಮೋನ ಪೇತ್ರನು ಮತ್ತು ಇನ್ನೊಬ್ಬ ಶಿಷ್ಯನು ಯೇಸುವನ್ನು ಹಿಂಬಾಲಿಸಿದರು. ಆ ಶಿಷ್ಯನು ಮಹಾಯಾಜಕನಿಗೆ ಪರಿಚಯವಿದ್ದುದರಿಂದ ಯೇಸುವಿನ ಸಂಗಡ ಮಹಾಯಾಜಕನ ಅಂಗಳದೊಳಗೆ ಹೋದನು.</verse>
				<verse number="16">ಆದರೆ ಪೇತ್ರನು ಬಾಗಿಲಿನ ಬಳಿಯಲ್ಲಿ ಹೊರಗೆ ನಿಂತಿದ್ದನು. ಮಹಾಯಾಜಕನಿಗೆ ಪರಿಚಯವಿದ್ದ ಆ ಇನ್ನೊಬ್ಬ ಶಿಷ್ಯನು ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಗೆ ಕರೆದುಕೊಂಡು ಬಂದನು.</verse>
				<verse number="17">ಆಗ ದ್ವಾರಪಾಲಕಿಯು ಪೇತ್ರನಿಗೆ, “ನೀನು ಸಹ ಯೇಸುವಿನ ಶಿಷ್ಯರಲ್ಲಿ ಒಬ್ಬನಲ್ಲವೇ?” ಎಂದು ಕೇಳಲು, ಅದಕ್ಕವನು, “ನಾನಲ್ಲ,” ಎಂದನು.</verse>
				<verse number="18">ಆಗ ಚಳಿಯಿದ್ದುದರಿಂದ ಸೇವಕರೂ ಕಾವಲುಗಾರರೂ ಬೆಂಕಿಮಾಡಿ ಚಳಿ ಕಾಯಿಸಿಕೊಳ್ಳುತ್ತಿದ್ದರು. ಪೇತ್ರನೂ ಅವರೊಂದಿಗೆ ನಿಂತು ಚಳಿ ಕಾಯಿಸಿಕೊಳ್ಳುತ್ತಿದ್ದನು.</verse>
				<verse number="19">ಆಗ ಮಹಾಯಾಜಕನು ಯೇಸುವನ್ನು ಅವರ ಶಿಷ್ಯರ ವಿಷಯವಾಗಿಯೂ ಅವರ ಬೋಧನೆಯ ವಿಷಯವಾಗಿಯೂ ಪ್ರಶ್ನಿಸಿದನು.</verse>
				<verse number="20">ಯೇಸು ಅವನಿಗೆ, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿಬರುವ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸುತ್ತಿದ್ದೆನು. ನಾನು ಮುಚ್ಚುಮರೆಯಾಗಿ ಏನೂ ಮಾತನಾಡಲಿಲ್ಲ.</verse>
				<verse number="21">ನೀನು ನನ್ನನ್ನು ಪ್ರಶ್ನಿಸುವುದೇಕೆ? ನಾನು ಅವರಿಗೆ ಏನು ಮಾತನಾಡಿದ್ದೇನೆಂದು ಕೇಳಿದವರನ್ನೇ ಪ್ರಶ್ನಿಸು, ನಾನು ಹೇಳಿದ್ದನ್ನು ಅವರು ತಿಳಿದಿದ್ದಾರೆ,” ಎಂದರು.</verse>
				<verse number="22">ಯೇಸು ಇವುಗಳನ್ನು ಹೇಳಿದಾಗ, ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ಯೇಸುವಿನ ಕೆನ್ನೆಗೆ ಹೊಡೆದು, “ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?” ಎಂದನು.</verse>
				<verse number="23">ಯೇಸು ಅವನಿಗೆ, “ನಾನು ಕೆಟ್ಟದ್ದನ್ನು ಮಾತನಾಡಿದ್ದರೆ ಕೆಟ್ಟದ್ದರ ವಿಷಯವಾಗಿ ಸಾಕ್ಷಿಕೊಡು; ಒಳ್ಳೆಯದನ್ನು ಮಾತನಾಡಿದ್ದರೆ ನೀನು ನನ್ನನ್ನು ಹೊಡೆಯುವುದೇಕೆ?” ಎಂದರು.</verse>
				<verse number="24">ಆಗ ಅನ್ನನು ಯೇಸುವನ್ನು ಕಟ್ಟಿಸಿ ಮಹಾಯಾಜಕನಾದ ಕಾಯಫನ ಬಳಿಗೆ ಕಳುಹಿಸಿದನು.</verse>
				<verse number="25">ಇತ್ತ ಸೀಮೋನ ಪೇತ್ರನು ಚಳಿಕಾಯಿಸಿಕೊಳ್ಳುತ್ತಾ ನಿಂತಿರುವಾಗ, ಒಬ್ಬನು ಅವನಿಗೆ, “ನೀನು ಸಹ ಆತನ ಶಿಷ್ಯನಲ್ಲವೇ?” ಎಂದು ಕೇಳಿದರು. ಅದಕ್ಕೆ ಅವನು ಅದನ್ನು ನಿರಾಕರಿಸಿ, “ನಾನಲ್ಲ,” ಎಂದನು.</verse>
				<verse number="26">ಮಹಾಯಾಜಕನ ಸೇವಕರಲ್ಲಿ ಕಿವಿ ಕತ್ತರಿಸಿದವನ ಬಂಧುವಾಗಿದ್ದ ಒಬ್ಬನು ಪೇತ್ರನಿಗೆ, “ನಾನು ನಿನ್ನನ್ನು ತೋಟದಲ್ಲಿ ಆತನ ಸಂಗಡ ಕಾಣಲಿಲ್ಲವೋ?” ಎಂದು ಕೇಳಿದ್ದಕ್ಕೆ,</verse>
				<verse number="27">ಪೇತ್ರನು ತಿರುಗಿ ನಿರಾಕರಿಸಿದನು. ಆಗ ಕೂಡಲೇ ಹುಂಜ ಕೂಗತೊಡಗಿತು.</verse>
				<verse number="28">ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ರೋಮನ್ ರಾಜ್ಯಪಾಲನ ನಿವಾಸಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಅಶುದ್ಧವಾಗದಂತೆ ಪಸ್ಕದ ಊಟಮಾಡುವುದಕ್ಕೆ ಅಡ್ಡಿಯಾದೀತೆಂದು ಅವರು ರಾಜ್ಯಪಾಲನ ನಿವಾಸದ ಒಳಗೆ ಹೋಗಲಿಲ್ಲ.</verse>
				<verse number="29">ಆಗ ಪಿಲಾತನೇ ಹೊರಗೆ ಅವರ ಬಳಿಗೆ ಬಂದು, “ನೀವು ಈತನ ಮೇಲೆ ಏನು ದೂರು ತಂದಿದ್ದೀರಿ?” ಎಂದು ಕೇಳಿದ್ದಕ್ಕೆ,</verse>
				<verse number="30">ಯೆಹೂದಿ ನಾಯಕರು, “ಈತನು ದುಷ್ಕರ್ಮಿಯಲ್ಲದಿದ್ದರೆ ನಾವು ಈತನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ್ಲ,” ಎಂದು ಹೇಳಿದರು.</verse>
				<verse number="31">ಆಗ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡುಹೋಗಿ ನಿಮ್ಮ ನಿಯಮದ ಪ್ರಕಾರ ಆತನಿಗೆ ತೀರ್ಪು ಮಾಡಿರಿ,” ಎಂದನು. ಅದಕ್ಕೆ ಯೆಹೂದ್ಯರು ಅವನಿಗೆ, “ಮರಣದಂಡನೆ ವಿಧಿಸುವ ಅಧಿಕಾರ ನಮಗೆ ಇಲ್ಲ,” ಎಂದು ಹೇಳಿದರು.</verse>
				<verse number="32">ಹೀಗೆ ಯೇಸು ತಾನು ಎಂಥಾ ಮರಣದಿಂದ ಸಾಯಲಿದ್ದೇನೆಂಬುದನ್ನು ಸೂಚಿಸಿ ಹೇಳಿದ ಮಾತು ನೆರವೇರಿತು.</verse>
				<verse number="33">ಆದ್ದರಿಂದ ಪಿಲಾತನು ತಿರುಗಿ ತನ್ನ ನಿವಾಸದೊಳಗೆ ಪ್ರವೇಶಿಸಿ ಯೇಸುವನ್ನು ಕರೆದು ಅವರಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು.</verse>
				<verse number="34">ಅದಕ್ಕೆ ಯೇಸು ಅವನಿಗೆ, “ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ ಇಲ್ಲವೆ ಬೇರೆಯವರು ನನ್ನನ್ನು ಕುರಿತು ನಿನಗೆ ಹೇಳಿದ್ದಾರೋ?” ಎಂದರು.</verse>
				<verse number="35">ಪಿಲಾತನು, “ನಾನೇನು ಯೆಹೂದ್ಯನೋ? ನಿನ್ನ ಜನಾಂಗವೂ ಮುಖ್ಯಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದನು.</verse>
				<verse number="36">ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನನ್ನನ್ನು ಯೆಹೂದ್ಯರಿಗೆ ಒಪ್ಪಿಸದಂತೆ ನನ್ನ ಸೇವಕರು ಹೋರಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ,” ಎಂದು ಉತ್ತರಕೊಟ್ಟರು.</verse>
				<verse number="37">ಪಿಲಾತನು ಯೇಸುವಿಗೆ, “ನೀನು ಅರಸನೋ?” ಎಂದು ಕೇಳಲು, ಯೇಸು, “ನಾನು ಅರಸನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿ ಕೊಡುವುದಕ್ಕಾಗಿ ಹುಟ್ಟಿ, ಇದಕ್ಕಾಗಿಯೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸೇರಿದ ಎಲ್ಲರೂ ನನ್ನ ಸ್ವರವನ್ನು ಕೇಳುತ್ತಾರೆ,” ಎಂದರು.</verse>
				<verse number="38">ಪಿಲಾತನು ಯೇಸುವಿಗೆ, “ಸತ್ಯ ಎಂದರೇನು?” ಎಂದನು. ಅವನು ಇದನ್ನು ಕೇಳಿದ ಮೇಲೆ ತಿರುಗಿ ಯೆಹೂದ್ಯರ ಬಳಿಗೆ ಹೋಗಿ ಅವರಿಗೆ, “ನಾನು ಈತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.</verse>
				<verse number="39">ಆದರೆ ಪಸ್ಕಹಬ್ಬದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟುಕೊಡುವ ಪದ್ಧತಿಯಿದೆಯಷ್ಟೆ; ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟುಕೊಡುವುದು ನಿಮಗೆ ಇಷ್ಟವೋ?” ಎಂದು ಕೇಳಿದನು.</verse>
				<verse number="40">ಅದಕ್ಕೆ ಅವರೆಲ್ಲರೂ ತಿರುಗಿ, “ಇವನು ಬೇಡ, ನಮಗೆ ಬರಬ್ಬನನ್ನು ಬಿಟ್ಟುಕೊಡು,” ಎಂದು ಕೂಗಿಕೊಂಡರು. ಆ ಬರಬ್ಬನು ದರೋಡೆಕೋರನಾಗಿದ್ದನು.</verse>
			</chapter>
			<chapter number="19">
				<verse number="1">ಆಗ ಪಿಲಾತನು ಯೇಸುವನ್ನು ತೆಗೆದುಕೊಂಡು ಕೊರಡೆಯಿಂದ ಹೊಡೆಸಿದನು.</verse>
				<verse number="2">ಸೈನಿಕರು ಮುಳ್ಳಿನ ಕಿರೀಟವನ್ನು ಹೆಣೆದು ಅವರ ತಲೆಯ ಮೇಲಿಟ್ಟು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ತೊಡಿಸಿ,</verse>
				<verse number="3">“ಯೆಹೂದ್ಯರ ಅರಸನೇ, ನಮಸ್ಕಾರ!” ಎಂದು ಹೇಳಿ ಯೇಸುವಿನ ಕೆನ್ನೆಗೆ ಹೊಡೆದರು.</verse>
				<verse number="4">ಆಗ ಪಿಲಾತನು ತಿರುಗಿ ಹೊರಗೆ ಹೋಗಿ ಯೆಹೂದ್ಯರ ಗುಂಪಿಗೆ, “ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವಂತೆ ಆತನನ್ನು ನಿಮ್ಮ ಬಳಿಗೆ ತರುತ್ತೇನೆ,” ಎಂದನು.</verse>
				<verse number="5">ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವರಾಗಿ ಹೊರಗೆ ಬಂದರು. ಪಿಲಾತನು ಅವರಿಗೆ, “ಇಗೋ, ಆ ಮನುಷ್ಯನು ಇವನೇ!” ಎಂದನು.</verse>
				<verse number="6">ಮುಖ್ಯಯಾಜಕರೂ ಕಾವಲಾಳುಗಳೂ ಯೇಸುವನ್ನು ನೋಡಿದಾಗ, “ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು!” ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ, “ನೀವೇ ಆತನನ್ನು ತೆಗೆದುಕೊಂಡುಹೋಗಿ ಶಿಲುಬೆಗೆ ಹಾಕಿರಿ. ಏಕೆಂದರೆ ನನಗೆ ಆತನಲ್ಲಿ ಯಾವ ಅಪರಾಧವೂ ಕಾಣಲಿಲ್ಲ,” ಎಂದನು.</verse>
				<verse number="7">ಯೆಹೂದ್ಯ ನಾಯಕರು ಅವನಿಗೆ, “ನಮಗೆ ಒಂದು ನಿಯಮವಿದೆ, ಆ ನಿಯಮದ ಪ್ರಕಾರ ಅವನು ಸಾಯಲೇಬೇಕು. ಏಕೆಂದರೆ ಅವನು ತನ್ನನ್ನು ದೇವರ ಪುತ್ರನನ್ನಾಗಿ ಮಾಡಿಕೊಂಡಿದ್ದಾನೆ,” ಎಂದರು.</verse>
				<verse number="8">ಪಿಲಾತನು ಈ ಮಾತನ್ನು ಕೇಳಿದಾಗ ಬಹಳವಾಗಿ ಭಯಪಟ್ಟನು.</verse>
				<verse number="9">ತಿರುಗಿ ತನ್ನ ನಿವಾಸದೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರ ಕೊಡಲಿಲ್ಲ.</verse>
				<verse number="10">ಆಗ ಪಿಲಾತನು ಯೇಸುವಿಗೆ, “ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವುದಕ್ಕೂ ನಿನ್ನನ್ನು ಶಿಲುಬೆಗೆ ಹಾಕಿಸುವುದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯದೋ?” ಎಂದು ಕೇಳಿದನು.</verse>
				<verse number="11">ಅದಕ್ಕೆ ಯೇಸು, “ಪರಲೋಕದಿಂದ ನಿನಗೆ ಕೊಟ್ಟ ಹೊರತು ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ,” ಎಂದು ಉತ್ತರಕೊಟ್ಟರು.</verse>
				<verse number="12">ಇದನ್ನು ಕೇಳಿದಾಗಿಂದ ಪಿಲಾತನು ಯೇಸುವನ್ನು ಬಿಡಿಸಲು ಪ್ರಯತ್ನಿಸಿದನು. ಆದರೆ ಯೆಹೂದ್ಯ ನಾಯಕರು, “ನೀನು ಈ ಮನುಷ್ಯನನ್ನು ಬಿಡುಗಡೆ ಮಾಡಿದರೆ, ನೀನು ಕೈಸರನ ಮಿತ್ರನಲ್ಲ. ತನ್ನನ್ನು ತಾನೇ ಅರಸನನ್ನಾಗಿ ಮಾಡಿಕೊಳ್ಳುವವನು, ಕೈಸರನಿಗೆ ವಿರೋಧವಾಗಿ ಮಾತನಾಡುವವನಾಗಿದ್ದಾನೆ,” ಎಂದು ಕೂಗಿ ಹೇಳಿದರು.</verse>
				<verse number="13">ಪಿಲಾತನು ಆ ಮಾತುಗಳನ್ನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದನು. ಹೀಬ್ರೂ ಭಾಷೆಯಲ್ಲಿ “ಗಬ್ಬಥಾ” ಎಂದು ಕರೆಯಲಾದ “ಕಲ್ಲು ಹಾಸಿದ ಕಟ್ಟೆ” ಎಂಬ ಕಟ್ಟೆಯ ಮೇಲಿದ್ದ ನ್ಯಾಯಾಸನದ ಮೇಲೆ ಕುಳಿತುಕೊಂಡನು.</verse>
				<verse number="14">ಅದು ಪಸ್ಕಹಬ್ಬಕ್ಕೆ ಸಿದ್ಧಮಾಡುವ ದಿನದ ಸುಮಾರು ಮಧ್ಯಾಹ್ನ ಹನ್ನೆರಡು ಗಂಟೆಯಾಗಿತ್ತು. ಪಿಲಾತನು ಯೆಹೂದ್ಯರಿಗೆ, “ಇಗೋ, ನಿಮ್ಮ ಅರಸನು,” ಎಂದನು.</verse>
				<verse number="15">ಆದರೆ ಅವರು, “ಆತನನ್ನು ಕೊಲ್ಲಿಸು ಕೊಲ್ಲಿಸು! ಆತನನ್ನು ಶಿಲುಬೆಗೆ ಹಾಕು!” ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಬೇಕೆ?” ಎಂದು ಕೇಳಿದನು. ಆಗ ಮುಖ್ಯಯಾಜಕರು, “ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ,” ಎಂದು ಉತ್ತರಕೊಟ್ಟರು.</verse>
				<verse number="16">ಆಗ ಪಿಲಾತನು ಯೇಸುವನ್ನು ಶಿಲುಬೆಗೆ ಹಾಕಿಸುವುದಕ್ಕಾಗಿ ಅವರಿಗೆ ಒಪ್ಪಿಸಿದನು. ಅವರು ಯೇಸುವನ್ನು ತಮ್ಮ ವಶಕ್ಕೆ ತೆಗೆದುಕೊಂಡು ಹೋದರು.</verse>
				<verse number="17">ಯೇಸು ತಮ್ಮ ಶಿಲುಬೆಯನ್ನು ತಾವೇ ಹೊತ್ತುಕೊಂಡು “ತಲೆಬುರುಡೆಯ ಸ್ಥಳ” ಎಂಬ ಸ್ಥಳಕ್ಕೆ ಹೋದರು. ಅದು ಅರಮಾಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಅರ್ಥ.</verse>
				<verse number="18">ಅಲ್ಲಿ ಯೇಸುವನ್ನೂ ಅವರ ಜೊತೆಯಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು. ಅವರಲ್ಲಿ ಒಬ್ಬನನ್ನು ಯೇಸುವಿನ ಬಲಗಡೆಗೂ ಮತ್ತೊಬ್ಬನನ್ನು ಅವರ ಎಡಗಡೆಗೂ ಇಟ್ಟರು.</verse>
				<verse number="19">ಪಿಲಾತನು ಒಂದು ಫಲಕದ ಮೇಲೆ ಶಿರೋನಾಮವನ್ನು ಬರೆಸಿ, ಅದನ್ನು ಶಿಲುಬೆಯ ಮೇಲಿಟ್ಟಿದ್ದನು. ಅದೇನಂದರೆ: ಯೆಹೂದ್ಯರ ಅರಸನಾದ ನಜರೇತಿನ ಯೇಸು.</verse>
				<verse number="20">ಈ ಫಲಕವನ್ನು ಯೆಹೂದ್ಯರಲ್ಲಿ ಅನೇಕರು ಓದಿದರು. ಏಕೆಂದರೆ ಯೇಸುವನ್ನು ಶಿಲುಬೆಗೇರಿಸಿದ ಆ ಸ್ಥಳವು ಪಟ್ಟಣಕ್ಕೆ ಸಮೀಪವಾಗಿತ್ತು. ಇದು ಹೀಬ್ರೂ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು.</verse>
				<verse number="21">ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ, “ಯೆಹೂದ್ಯರ ಅರಸನೆಂದು ಬರೆಯಬೇಡ, ‘ತಾನು ಯೆಹೂದ್ಯರ ಅರಸನು ಎಂದು ಹೇಳಿಕೊಂಡವನು’ ಎಂದು ಬರೆ,” ಎಂದರು.</verse>
				<verse number="22">ಪಿಲಾತನು, “ನಾನು ಬರೆದದ್ದು ಬರೆದಾಯಿತು,” ಎಂದು ಉತ್ತರಕೊಟ್ಟನು.</verse>
				<verse number="23">ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಹಂಚಿಕೊಂಡರು. ಅವರ ಒಳ ಅಂಗಿಯನ್ನು ಸಹ ತೆಗೆದುಕೊಂಡರು. ಆ ಒಳ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.</verse>
				<verse number="24">ಆದ್ದರಿಂದ ಅವರು, “ನಾವು ಅದನ್ನು ಹರಿಯುವುದು ಬೇಡ. ಆದರೆ ಅದು ಯಾರಿಗಾಗುವುದೋ ಎಂದು ನೋಡುವುದಕ್ಕಾಗಿ ಚೀಟು ಹಾಕಿಕೊಳ್ಳೋಣ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಹೀಗೆ, “ನನ್ನ ಬಟ್ಟೆಯನ್ನು ಅವರು ತಮ್ಮೊಳಗೆ ಪಾಲುಮಾಡಿಕೊಂಡರು. ನನ್ನ ಒಳ ಅಂಗಿಗಾಗಿ ಚೀಟುಹಾಕಿದರು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರುವಂತೆ, ಸೈನಿಕರು ಚೀಟುಹಾಕಿ ಪಾಲುಮಾಡಿಕೊಂಡರು.</verse>
				<verse number="25">ಯೇಸುವಿನ ಶಿಲುಬೆಯ ಬಳಿಯಲ್ಲಿ ಅವರ ತಾಯಿಯೂ ಅವರ ತಾಯಿಯ ಸಹೋದರಿಯೂ ಕ್ಲೋಪನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು.</verse>
				<verse number="26">ಯೇಸು ತಮ್ಮ ತಾಯಿಯೂ ತಾವು ಪ್ರೀತಿಸಿದ ಶಿಷ್ಯನೂ ಹತ್ತಿರದಲ್ಲಿ ನಿಂತಿರುವುದನ್ನು ಕಂಡು ತಮ್ಮ ತಾಯಿಗೆ, “ಅಮ್ಮಾ, ಇಗೋ, ನಿನ್ನ ಮಗನು,” ಎಂದರು.</verse>
				<verse number="27">ಆಮೇಲೆ ಯೇಸು ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿಯು,” ಎಂದರು. ಆ ಸಮಯದಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಇರಿಸಿಕೊಂಡನು.</verse>
				<verse number="28">ಇದಾದ ಮೇಲೆ ಯೇಸು ಈಗ ಎಲ್ಲವೂ ಪೂರ್ತಿಯಾಗಿದೆಯೆಂದು ತಿಳಿದು, ಪವಿತ್ರ ವೇದದ ವಾಕ್ಯವು ನೆರವೇರುವಂತೆ, “ನನಗೆ ನೀರಡಿಕೆಯಾಗಿದೆ” ಎಂದರು.</verse>
				<verse number="29">ಆಗ ಅಲ್ಲಿ ಹುಳಿರಸ ತುಂಬಿದ ಪಾತ್ರೆಯಿತ್ತು. ಅವರು ಹೀರುವ ಪದಾರ್ಥವನ್ನು ಹುಳಿರಸದಲ್ಲಿ ಅದ್ದಿ ಹಿಸ್ಸೋಪ್ ಗಿಡದ ಕೋಲಿಗೆ ಸಿಕ್ಕಿಸಿ ಯೇಸುವಿನ ಬಾಯಿಗೆ ಇಟ್ಟರು.</verse>
				<verse number="30">ಯೇಸು ಆ ಹುಳಿರಸವನ್ನು ತೆಗೆದುಕೊಂಡ ಮೇಲೆ, “ತೀರಿತು” ಎಂದು ಹೇಳಿ ತಲೆಬಾಗಿ ತಮ್ಮ ಆತ್ಮವನ್ನು ಒಪ್ಪಿಸಿಕೊಟ್ಟರು.</verse>
				<verse number="31">ಅದು ಪಸ್ಕಹಬ್ಬದ ಸಿದ್ಧತೆಯ ದಿನವಾಗಿತ್ತು. ಮರುದಿನ ವಿಶೇಷ ಸಬ್ಬತ್ ದಿನದಲ್ಲಿ ದೇಹಗಳು ಶಿಲುಬೆಯ ಮೇಲೆ ಇರಬಾರದೆಂದು ಅವರ ಕಾಲುಗಳನ್ನು ಮುರಿದು ಅವರನ್ನು ತೆಗೆದುಬಿಡಬೇಕೆಂದು ಯೆಹೂದ್ಯ ನಾಯಕರು ಪಿಲಾತನನ್ನು ಕೇಳಿಕೊಂಡರು.</verse>
				<verse number="32">ಅದರಂತೆ ಸೈನಿಕರು ಬಂದು ಯೇಸುವಿನ ಜೊತೆಯಲ್ಲಿ ಶಿಲುಬೆಗೇರಿಸಲಾಗಿದ್ದ ಮೊದಲನೆಯವನ ಕಾಲುಗಳನ್ನೂ ಮತ್ತೊಬ್ಬನ ಕಾಲುಗಳನ್ನೂ ಮುರಿದರು.</verse>
				<verse number="33">ಆದರೆ ಅವರು ಯೇಸುವಿನ ಬಳಿಗೆ ಬಂದಾಗ ಯೇಸು ಆಗಲೇ ಸತ್ತಿರುವುದನ್ನು ಕಂಡು ಅವರ ಕಾಲುಗಳನ್ನು ಮುರಿಯಲಿಲ್ಲ.</verse>
				<verse number="34">ಆದರೆ ಸೈನಿಕರಲ್ಲಿ ಒಬ್ಬನು ಈಟಿಯಿಂದ ಯೇಸುವಿನ ಪಕ್ಕೆಯನ್ನು ತಿವಿದನು. ಕೂಡಲೇ ರಕ್ತವೂ ನೀರೂ ಹೊರಗೆ ಬಂದವು.</verse>
				<verse number="35">ಇದನ್ನು ಕಣ್ಣಾರೆ ಕಂಡವನೇ ಸಾಕ್ಷಿ ಕೊಟ್ಟಿದ್ದಾನೆ. ಅವನ ಸಾಕ್ಷಿಯು ಸತ್ಯವಾದದ್ದು, ನೀವು ಸಹ ನಂಬುವಂತೆ ತಾನು ಹೇಳಿರುವುದು ಸತ್ಯವೆಂದು ಅವನು ಬಲ್ಲನು.</verse>
				<verse number="36">ಏಕೆಂದರೆ, “ಯೇಸುವಿನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರುವಂತೆಯೇ ಇವೆಲ್ಲಾ ಸಂಭವಿಸಿದವು.</verse>
				<verse number="37">ಮತ್ತೊಂದು ಪವಿತ್ರ ವೇದದ ವಾಕ್ಯವು, “ತಾವು ಇರಿದವನನ್ನು ಅವರು ನೋಡುವರು,” ಎಂದು ಹೇಳುತ್ತದೆ.</verse>
				<verse number="38">ತರುವಾಯ ಯೆಹೂದ್ಯರ ಭಯದ ನಿಮಿತ್ತದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾಯದ ಯೋಸೇಫನು ಯೇಸುವಿನ ದೇಹವನ್ನು ತೆಗೆದುಕೊಂಡು ಹೋಗುವುದಕ್ಕೆ ಪಿಲಾತನನ್ನು ಕೇಳಿಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಯೇಸುವಿನ ದೇಹವನ್ನು ತೆಗೆದುಕೊಂಡು ಹೋದನು.</verse>
				<verse number="39">ಇದಲ್ಲದೆ ಮೊದಲು ಒಂದು ಸಾರಿ ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ, ಅಗರುಗಳನ್ನು, ಸುಗಂಧದ್ರವ್ಯ ಬೆರೆಸಿದ ಮಿಶ್ರಣವನ್ನು, ಮೂವತ್ತು ಕಿಲೋಗ್ರಾಮಿನಷ್ಟು ತೆಗೆದುಕೊಂಡು ಅಲ್ಲಿಗೆ ಬಂದನು.</verse>
				<verse number="40">ಆಗ ಅವರು ಯೇಸುವಿನ ದೇಹವನ್ನು ತೆಗೆದುಕೊಂಡು ಯೆಹೂದ್ಯರಲ್ಲಿ ಹೂಳುವ ಪದ್ಧತಿಯ ಪ್ರಕಾರ ಅದನ್ನು ಸುಗಂಧದ್ರವ್ಯಗಳೊಂದಿಗೆ ನಾರುಬಟ್ಟೆಗಳಲ್ಲಿ ಸುತ್ತಿದರು.</verse>
				<verse number="41">ಯೇಸು ಶಿಲುಬೆಗೇರಿಸಿದ ಸ್ಥಳದಲ್ಲಿ ಒಂದು ತೋಟವಿತ್ತು. ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಹೊಸ ಸಮಾಧಿಯಿತ್ತು.</verse>
				<verse number="42">ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದಲೂ ಸಮಾಧಿಯು ಸಮೀಪವಾಗಿದ್ದುದರಿಂದಲೂ ಅವರು ಯೇಸುವನ್ನು ಅಲ್ಲಿಯೇ ಸಮಾಧಿಮಾಡಿದರು.</verse>
			</chapter>
			<chapter number="20">
				<verse number="1">ವಾರದ ಮೊದಲನೆಯ ದಿನದಲ್ಲಿ ಮುಂಜಾನೆ ಇನ್ನೂ ಕತ್ತಲಿರುವಾಗಲೇ ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದು ಸಮಾಧಿಯಿಂದ ಬಂಡೆ ತೆಗೆದು ಹಾಕಿರುವುದನ್ನು ಕಂಡಳು.</verse>
				<verse number="2">ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, “ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ, ಅವರು ಕರ್ತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ,” ಎಂದು ಹೇಳಿದಳು.</verse>
				<verse number="3">ಆಗ ಪೇತ್ರನೂ ಇನ್ನೊಬ್ಬ ಶಿಷ್ಯನೂ ಸಮಾಧಿಯ ಕಡೆಗೆ ಹೊರಟರು.</verse>
				<verse number="4">ಅವರಿಬ್ಬರೂ ಜೊತೆಯಾಗಿ ಓಡಿದರು. ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲು ಸಮಾಧಿಗೆ ಬಂದನು.</verse>
				<verse number="5">ಅವನು ಬಗ್ಗಿ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವುದನ್ನು ಕಂಡನು. ಆದರೂ ಅವನು ಒಳಗೆ ಪ್ರವೇಶಿಸಲಿಲ್ಲ.</verse>
				<verse number="6">ಆಗ ಸೀಮೋನ ಪೇತ್ರನು ಸಹ ಅವನ ಹಿಂದೆ ಬಂದು ನೇರವಾಗಿ ಸಮಾಧಿಯೊಳಕ್ಕೆ ಪ್ರವೇಶಿಸಿ, ನಾರುಬಟ್ಟೆಗಳು ಬಿದ್ದಿರುವುದನ್ನೂ</verse>
				<verse number="7">ಯೇಸುವಿನ ತಲೆಗೆ ಸುತ್ತಿದ ವಸ್ತ್ರವು ನಾರುಬಟ್ಟೆಗಳೊಂದಿಗೆ ಇರದೆ ಮಡಚಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ಕಂಡನು.</verse>
				<verse number="8">ಆಗ ಮೊದಲು ಸಮಾಧಿಗೆ ಬಂದಿದ್ದ ಆ ಇನ್ನೊಬ್ಬ ಶಿಷ್ಯನು ಸಹ ಪ್ರವೇಶಿಸಿ, ಕಂಡು ನಂಬಿದನು.</verse>
				<verse number="9">ಯೇಸು ಸತ್ತವರೊಳಗಿಂದ ಪುನಃ ಎದ್ದು ಬರಬೇಕು ಎಂಬ ಪವಿತ್ರ ವೇದದ ವಾಕ್ಯವು ಅವರಿಗೆ ಇನ್ನೂ ತಿಳಿದಿರಲಿಲ್ಲ.</verse>
				<verse number="10">ತರುವಾಯ ಆ ಶಿಷ್ಯರು ಉಳಿದವರ ಬಳಿಗೆ ಹೊರಟು ಹೋದರು.</verse>
				<verse number="11">ಆದರೆ ಮರಿಯಳು ಸಮಾಧಿಯ ಹೊರಗೆ ಅಳುತ್ತಾ ನಿಂತಿದ್ದಳು. ಆಕೆಯು ಅಳುತ್ತಾ ಸಮಾಧಿಯೊಳಗೆ ಬಗ್ಗಿ ನೋಡಿದಾಗ,</verse>
				<verse number="12">ಯೇಸುವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳಿವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ಯೇಸುವಿನ ತಲೆಯ ಕಡೆಗೂ ಮತ್ತೊಬ್ಬನು ಅವರ ಪಾದಗಳಿದ್ದ ಕಡೆಗೂ ಕುಳಿತಿರುವುದನ್ನು ಕಂಡಳು.</verse>
				<verse number="13">ಅವರು ಆಕೆಗೆ, “ಅಮ್ಮಾ, ನೀನು ಏಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು ಅವರಿಗೆ, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಕರ್ತನನ್ನು ಅವರು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ,” ಎಂದಳು.</verse>
				<verse number="14">ಆಕೆಯು ಹೀಗೆ ಹೇಳಿ ಹಿಂದಕ್ಕೆ ತಿರುಗಿದಾಗ ಯೇಸು ನಿಂತಿರುವುದನ್ನು ಕಂಡಳು. ಆದರೆ ಅವರು ಯೇಸುವೇ ಎಂದು ಆಕೆಗೆ ತಿಳಿಯಲಿಲ್ಲ.</verse>
				<verse number="15">ಯೇಸು ಆಕೆಗೆ, “ಅಮ್ಮಾ, ನೀನು ಏಕೆ ಅಳುತ್ತಿರುವೆ? ಯಾರನ್ನು ಹುಡುಕುತ್ತಿರುವೆ?” ಎಂದು ಕೇಳಲು, ಆಕೆಯು ಅವರು ತೋಟಗಾರನೆಂದು ನೆನಸಿ ಅವರಿಗೆ, “ಅಯ್ಯಾ, ನೀನು ಅವರನ್ನು ತೆಗೆದುಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು; ನಾನು ಅವರನ್ನು ತೆಗೆದುಕೊಂಡು ಹೋಗುತ್ತೇನೆ,” ಎಂದಳು.</verse>
				<verse number="16">ಯೇಸು ಆಕೆಗೆ, “ಮರಿಯಳೇ,” ಎಂದು ಹೇಳಲು, ಆಕೆಯು ತಿರುಗಿಕೊಂಡು ಹೀಬ್ರೂ ಭಾಷೆಯಲ್ಲಿ ಅವರಿಗೆ, “ರಬ್ಬೂನಿ!” ಎಂದಳು. ಹಾಗೆಂದರೆ “ಬೋಧಕನೇ” ಎಂದರ್ಥ.</verse>
				<verse number="17">ಯೇಸು ಆಕೆಗೆ, “ನನ್ನನ್ನು ಹಿಡಿಯಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಹೋಗಲಿಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ‘ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವ ತಂದೆಯ ಬಳಿಗೆ ನಾನು ಹೋಗುತ್ತೇನೆ’ ಎಂದು ತಿಳಿಸು,” ಎಂದರು.</verse>
				<verse number="18">ಆಗ ಮಗ್ದಲದ ಮರಿಯಳು ಬಂದು, “ನಾನು ಕರ್ತನನ್ನು ಕಂಡಿದ್ದೇನೆ,” ಎಂದು ಹೇಳಿ, ಅವರು ತನಗೆ ಈ ಸಂಗತಿಗಳನ್ನು ಹೇಳಿದರೆಂದು ಶಿಷ್ಯರಿಗೆ ತಿಳಿಸಿದಳು.</verse>
				<verse number="19">ಅದೇ ಭಾನುವಾರದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿದ್ದ ಮನೆಯ ಬಾಗಿಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು, “ನಿಮಗೆ ಸಮಾಧಾನವಾಗಲಿ!” ಎಂದು ಅವರಿಗೆ ಹೇಳಿದರು.</verse>
				<verse number="20">ಇದನ್ನು ಹೇಳಿದ ಮೇಲೆ ತಮ್ಮ ಕೈಗಳನ್ನೂ ಪಕ್ಕೆಯನ್ನೂ ಅವರಿಗೆ ತೋರಿಸಿದರು. ಆಗ ಶಿಷ್ಯರು ಕರ್ತನನ್ನು ಕಂಡು ಸಂತೋಷಪಟ್ಟರು.</verse>
				<verse number="21">ಯೇಸು ತಿರುಗಿ ಅವರಿಗೆ, “ನಿಮಗೆ ಸಮಾಧಾನವಾಗಲಿ, ತಂದೆಯು ನನ್ನನ್ನು ಕಳುಹಿಸಿದಂತೆಯೇ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ,” ಎಂದರು.</verse>
				<verse number="22">ಯೇಸು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮರನ್ನು ಪಡೆದುಕೊಳ್ಳಿರಿ.</verse>
				<verse number="23">ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲಾಗುವುದು ಮತ್ತು ಯಾರ ಪಾಪಗಳನ್ನು ನೀವು ಉಳಿಸುತ್ತೀರೋ ಅವು ಅವರಿಗೆ ಉಳಿಸಲಾಗುವುದು,” ಎಂದು ಹೇಳಿದರು.</verse>
				<verse number="24">ಆದರೆ ಯೇಸು ಬಂದಾಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ದಿದುಮನು ಎನಿಸಿಕೊಂಡ ತೋಮನು ಅವರ ಸಂಗಡ ಇರಲಿಲ್ಲ.</verse>
				<verse number="25">ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ಕಂಡಿದ್ದೇವೆ,” ಎಂದು ಹೇಳಿದರು. ಆದರೆ ಅವನು ಅವರಿಗೆ, “ನಾನು ಅವರ ಕೈಗಳಲ್ಲಿ ಮೊಳೆಗಳ ಗುರುತನ್ನು ಕಂಡು, ಅದರಲ್ಲಿ ನನ್ನ ಬೆರಳನ್ನು ಇಟ್ಟು ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕಿದ ಹೊರತು ನಂಬುವುದೇ ಇಲ್ಲ,” ಎಂದು ಹೇಳಿದನು.</verse>
				<verse number="26">ಎಂಟು ದಿವಸಗಳಾದ ಮೇಲೆ ಯೇಸುವಿನ ಶಿಷ್ಯರು ಪುನಃ ಮನೆಯ ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಿಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು, “ನಿಮಗೆ ಸಮಾಧಾನವಾಗಲಿ!” ಎಂದರು.</verse>
				<verse number="27">ಆಮೇಲೆ ಯೇಸು ತೋಮನಿಗೆ, “ನಿನ್ನ ಬೆರಳನ್ನು ಇಲ್ಲಿ ಇಡು. ನನ್ನ ಕೈಗಳನ್ನು ನೋಡು, ನಿನ್ನ ಕೈಚಾಚಿ ನನ್ನ ಪಕ್ಕೆಯಲ್ಲಿ ಇಡು. ನಂಬದವನಾಗಿರಬೇಡ, ನಂಬುವವನಾಗಿರು,” ಎಂದರು.</verse>
				<verse number="28">ಆಗ ತೋಮನು, “ನನ್ನ ಕರ್ತ, ನನ್ನ ದೇವರೇ!” ಎಂದನು.</verse>
				<verse number="29">ಯೇಸು ಅವನಿಗೆ, “ನೀನು ನನ್ನನ್ನು ಕಂಡಿದ್ದರಿಂದ ನಂಬಿದ್ದೀಯಾ? ಕಾಣದೆ ನಂಬಿದವರು ಧನ್ಯರು,” ಎಂದರು.</verse>
				<verse number="30">ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ಶಿಷ್ಯರ ಮುಂದೆ ಮಾಡಿದರು. ಅವುಗಳು ಈ ಪುಸ್ತಕದಲ್ಲಿ ಬರೆದಿಲ್ಲ.</verse>
				<verse number="31">ಆದರೆ ಯೇಸುವೇ ದೇವಪುತ್ರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ ನಂಬಿ ಅವರ ಹೆಸರಿನ ಮೂಲಕ ನಿತ್ಯಜೀವವನ್ನು ಪಡೆದುಕೊಳ್ಳುವಂತೆಯೂ ಇವುಗಳು ಬರೆಯಲಾಗಿದೆ.</verse>
			</chapter>
			<chapter number="21">
				<verse number="1">ಇವುಗಳಾದ ಮೇಲೆ ಯೇಸು ಗಲಿಲಾಯ ಸರೋವರದ ಬಳಿಯಲ್ಲಿ ಶಿಷ್ಯರಿಗೆ ತಮ್ಮನ್ನು ಪುನಃ ತೋರಿಸಿಕೊಂಡರು. ಅವರು ಈ ರೀತಿಯಾಗಿ ಕಾಣಿಸಿಕೊಂಡರು:</verse>
				<verse number="2">ಸೀಮೋನ ಪೇತ್ರನೂ ದಿದುಮನೆಂಬ ತೋಮನೂ ಗಲಿಲಾಯದ ಕಾನಾ ಊರಿನ ನತಾನಯೇಲನೂ ಜೆಬೆದಾಯನ ಮಕ್ಕಳೂ ಅವರ ಶಿಷ್ಯರಲ್ಲಿ ಇನ್ನಿಬ್ಬರೂ ಒಟ್ಟಾಗಿ ಕೂಡಿದ್ದರು.</verse>
				<verse number="3">ಆಗ ಸೀಮೋನ ಪೇತ್ರನು ಅವರಿಗೆ, “ನಾನು ಮೀನು ಹಿಡಿಯಲು ಹೋಗುತ್ತೇನೆ,” ಎಂದು ಹೇಳಲು ಅವರು ಅವನಿಗೆ, “ನಾವು ಸಹ ನಿನ್ನ ಸಂಗಡ ಬರುತ್ತೇವೆ,” ಎಂದರು. ಅವರು ಹೊರಟು ದೋಣಿಯನ್ನು ಹತ್ತಿದರು. ಆದರೆ ಆ ರಾತ್ರಿ ಅವರಿಗೆ ಏನೂ ಸಿಗಲಿಲ್ಲ.</verse>
				<verse number="4">ಬೆಳಗಾಗುವಷ್ಟರಲ್ಲಿ ಯೇಸು ತೀರದಲ್ಲಿ ನಿಂತಿದ್ದರು. ಆದರೆ ಅವರೇ ಯೇಸು ಎಂದು ಶಿಷ್ಯರಿಗೆ ತಿಳಿಯಲಿಲ್ಲ.</verse>
				<verse number="5">ಆಗ ಯೇಸು ಅವರಿಗೆ, “ಮಕ್ಕಳೇ, ನಿಮ್ಮ ಬಳಿಯಲ್ಲಿ ಮೀನುಗಳಿವೆಯೋ?” ಎಂದು ಕೇಳಲು, ಅವರು ಯೇಸುವಿಗೆ, “ಇಲ್ಲ,” ಎಂದು ಉತ್ತರಕೊಟ್ಟರು.</verse>
				<verse number="6">ಯೇಸು ಶಿಷ್ಯರಿಗೆ, “ದೋಣಿಯ ಬಲಗಡೆಯಲ್ಲಿ ಬಲೆ ಬೀಸಿರಿ; ನಿಮಗೆ ಮೀನು ಸಿಗುತ್ತವೆ,” ಎಂದರು. ಅವರು ಬಲೆ ಬೀಸಿದಾಗ ಮೀನುಗಳ ರಾಶಿ ಬಲೆಗೆ ಬಿದ್ದದರ ದೆಸೆಯಿಂದ ಅವರಿಗೆ ಎಳೆಯುವುದಕ್ಕೆ ಆಗದೆ ಹೋಯಿತು.</verse>
				<verse number="7">ಯೇಸು ಪ್ರೀತಿಸಿದ ಆ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ,” ಎಂದನು. ಅದನ್ನು ಕೇಳಿ ಸೀಮೋನ ಪೇತ್ರನು ತಾನು ತೆಗೆದುಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.</verse>
				<verse number="8">ಉಳಿದ ಶಿಷ್ಯರು ಮೀನುಗಳಿದ್ದ ಬಲೆಯನ್ನು ಎಳೆಯುತ್ತಾ ಆ ದೋಣಿಯಲ್ಲಿ ಬಂದರು. ಏಕೆಂದರೆ ಅವರು ದಡದಿಂದ ಹೆಚ್ಚು ದೂರವಿರಲಿಲ್ಲ. ಸುಮಾರು ತೊಂಬತ್ತು ಮೀಟರ್ ದೂರವಿತ್ತು.</verse>
				<verse number="9">ಅವರು ದಡವನ್ನು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನೂ ರೊಟ್ಟಿಯನ್ನೂ ಕಂಡರು.</verse>
				<verse number="10">ಯೇಸು ಅವರಿಗೆ, “ನೀವು ಈಗ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿರಿ,” ಎಂದರು.</verse>
				<verse number="11">ಸೀಮೋನ ಪೇತ್ರನು ಹೋಗಿ ನೂರೈವತ್ತಮೂರು ದೊಡ್ಡ ಮೀನುಗಳಿಂದ ತುಂಬಿದ ಬಲೆಯನ್ನು ದಡಕ್ಕೆ ಎಳೆದನು. ಅಷ್ಟು ಮೀನುಗಳಿದ್ದರೂ ಬಲೆಯು ಹರಿದಿರಲಿಲ್ಲ.</verse>
				<verse number="12">ಯೇಸು ಅವರಿಗೆ, “ಬಂದು ಉಪಹಾರ ಮಾಡಿರಿ,” ಎಂದರು; ಅವರು ಸ್ವಾಮಿಯವರೆಂದು ತಿಳಿದಿದ್ದರಿಂದ, “ನೀನು ಯಾರು?” ಎಂದು ಅವರನ್ನು ಕೇಳಲು ಶಿಷ್ಯರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ.</verse>
				<verse number="13">ಆಗ ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟರು. ಹಾಗೆಯೇ ಮೀನನ್ನೂ ಕೊಟ್ಟರು.</verse>
				<verse number="14">ಯೇಸು ಸತ್ತವರೊಳಗಿಂದ ಎದ್ದ ಮೇಲೆ ತಮ್ಮ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.</verse>
				<verse number="15">ಅವರು ಉಪಹಾರ ಮಾಡಿದ ಮೇಲೆ ಯೇಸು ಸೀಮೋನ ಪೇತ್ರನಿಗೆ, “ಯೋಹಾನನ ಮಗ ಸೀಮೋನನೇ, ನೀನು ಇವರಿಗಿಂತ ನನ್ನನ್ನು ಹೆಚ್ಚಾಗಿ ಪ್ರೀತಿಸುತ್ತೀಯೋ?” ಎಂದು ಕೇಳಲು, ಅವನು ಯೇಸುವಿಗೆ, “ಹೌದು, ಕರ್ತನೇ, ನಾನು ನಿನ್ನ ಮೇಲೆ ಮಮತೆ ಇಟ್ಟಿದ್ದೇನೆಂದು ನೀನೇ ಬಲ್ಲೆ,” ಎಂದನು. ಅದಕ್ಕೆ ಯೇಸು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು,” ಎಂದು ಹೇಳಿದರು.</verse>
				<verse number="16">ಯೇಸು ತಿರುಗಿ ಎರಡನೆಯ ಸಾರಿ ಅವನಿಗೆ, “ಯೋಹಾನನ ಮಗ ಸೀಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯೋ?” ಎಂದು ಕೇಳಲು, ಪೇತ್ರನು ಯೇಸುವಿಗೆ, “ಹೌದು ಕರ್ತನೇ, ನಾನು ನಿಮ್ಮ ಮೇಲೆ ಮಮತೆ ಇಟ್ಟಿದ್ದೇನೆಂದು ನೀವೇ ಬಲ್ಲಿರಿ,” ಎಂದನು. ಅದಕ್ಕೆ ಯೇಸು ಅವನಿಗೆ, “ನನ್ನ ಕುರಿಗಳನ್ನು ರಕ್ಷಿಸು,” ಎಂದು ಹೇಳಿದರು.</verse>
				<verse number="17">ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.</verse>
				<verse number="18">ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, “ನೀನು ಯುವಕನಾಗಿದ್ದಾಗ ನೀನೇ ನಿನ್ನ ಉಡುಪನ್ನು ಧರಿಸಿಕೊಂಡು ಇಷ್ಟ ಬಂದ ಕಡೆಗೆ ತಿರುಗಾಡುತ್ತಿದ್ದೆ. ಆದರೆ ನೀನು ವೃದ್ಧನಾದಾಗ ನಿನ್ನ ಕೈಗಳನ್ನು ಚಾಚುವೆ, ಆಗ ಮತ್ತೊಬ್ಬನು ನಿನ್ನ ನಡುವನ್ನು ಕಟ್ಟಿ ನಿನಗೆ ಇಷ್ಟವಿಲ್ಲದ ಕಡೆಗೆ ನಿನ್ನನ್ನು ಹೊತ್ತುಕೊಂಡು ಹೋಗುವನು,” ಎಂದರು.</verse>
				<verse number="19">ಅವನು ಎಂಥ ಮರಣದಿಂದ ದೇವರನ್ನು ಮಹಿಮೆ ಪಡಿಸುವನು ಎಂಬುದನ್ನು ಸೂಚಿಸಿ ಯೇಸು ಇದನ್ನು ಹೇಳಿದರು. ಅವರು ಇದನ್ನು ಹೇಳಿ ಪೇತ್ರನಿಗೆ, “ನನ್ನನ್ನು ಹಿಂಬಾಲಿಸು,” ಎಂದರು.</verse>
				<verse number="20">ಪೇತ್ರನು ತಿರುಗಿ ಕಂಡಾಗ ಯೇಸುವನ್ನು ಪ್ರೀತಿಸಿದಂಥ ಶಿಷ್ಯನು ಅವರ ಹಿಂದೆ ಬರುವುದನ್ನು ಕಂಡನು. ಯೇಸುವಿನ ಎದೆಗೆ ಒರಗಿಕೊಂಡು, “ಕರ್ತನೇ, ನಿನ್ನನ್ನು ಹಿಡಿದುಕೊಡುವವನು ಯಾರು?” ಎಂದು ಕೇಳಿದಂಥವನು ಇವನೇ.</verse>
				<verse number="21">ಇವನನ್ನು ಪೇತ್ರನು ಕಂಡು ಯೇಸುವಿಗೆ, “ಕರ್ತನೇ, ಇವನ ವಿಷಯವೇನು?” ಎಂದನು.</verse>
				<verse number="22">ಯೇಸು ಅವನಿಗೆ, “ನಾನು ಬರುವ ತನಕ ಅವನು ಉಳಿದಿರಬೇಕೆಂಬುದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾಲಿಸು,” ಎಂದರು.</verse>
				<verse number="23">ಆದ್ದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೂ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂಬುದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದರು.</verse>
				<verse number="24">ಇವುಗಳ ವಿಷಯವಾಗಿ ಸಾಕ್ಷಿಕೊಟ್ಟು, ಇವುಗಳನ್ನು ಬರೆದ ಶಿಷ್ಯನು ಅವನೇ, ಅವನ ಸಾಕ್ಷಿಯು ಸತ್ಯವೆಂದು ನಾವು ಬಲ್ಲೆವು.</verse>
				<verse number="25">ಇದಲ್ಲದೆ ಯೇಸು ಮಾಡಿದ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನು ಒಂದೊಂದಾಗಿ ಬರೆಯುವುದಾದರೆ, ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಸಾಕಾಗುವುದಿಲ್ಲ ಎಂದು ನಾನು ನೆನಸುತ್ತೇನೆ.</verse>
			</chapter>
		</book>
		<book number="44">
			<chapter number="1">
				<verse number="1">ಥೆಯೊಫಿಲನೇ, ನಾನು ನಿನಗೆ ನನ್ನ ಮೊದಲನೆಯ ಗ್ರಂಥದಲ್ಲಿ ಯೇಸು ಮಾಡುವುದಕ್ಕೂ ಬೋಧಿಸುವುದಕ್ಕೂ ಪ್ರಾರಂಭಿಸಿದ್ದೆಲ್ಲವನ್ನೂ ಕುರಿತು ನಿಮಗೆ ಬರೆದಿದ್ದೇನೆ.</verse>
				<verse number="2">ಅಂದರೆ, ಯೇಸು ಆರಿಸಿಕೊಂಡ ಅಪೊಸ್ತಲರಿಗೆ ಪವಿತ್ರಾತ್ಮ ದೇವರ ಮುಖಾಂತರ ಆಜ್ಞಾಪಿಸಿದ ದಿನ ಮೊದಲುಗೊಂಡು ಸ್ವರ್ಗಕ್ಕೆ ಏರಿಹೋಗುವ ದಿನದವರೆಗೆ ಮಾಡಿದ್ದೆಲ್ಲವನ್ನೂ ಬರೆದಿದ್ದೇನೆ.</verse>
				<verse number="3">ಯೇಸು ಬಾಧೆಪಟ್ಟು ಸತ್ತ ನಂತರ, ಅಪೊಸ್ತಲರಿಗೆ ಪ್ರತ್ಯಕ್ಷರಾಗುತ್ತಾ ತಾವು ಜೀವಂತವಾಗಿರುವುದನ್ನು ಅನೇಕ ನಿಶ್ಚಿತ ರುಜುವಾತುಗಳಿಂದ ತೋರಿಸಿಕೊಟ್ಟರು ಮತ್ತು ನಲವತ್ತು ದಿನಗಳ ಅವಧಿಯಲ್ಲಿ ಯೇಸು ಅವರಿಗೆ ಕಾಣಿಸಿಕೊಂಡು ದೇವರ ರಾಜ್ಯವನ್ನು ಕುರಿತು ತಿಳಿಸಿದರು.</verse>
				<verse number="4">ಒಮ್ಮೆ ಯೇಸು ಶಿಷ್ಯರೊಂದಿಗೆ ಊಟಮಾಡುತ್ತಿದ್ದಾಗ ಶಿಷ್ಯರಿಗೆ, “ನೀವು ಯೆರೂಸಲೇಮನ್ನು ಬಿಟ್ಟು ಹೋಗಬೇಡಿರಿ, ನಾನು ನಿಮಗೆ ತಿಳಿಸಿದಂತೆ ನನ್ನ ತಂದೆ ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ.</verse>
				<verse number="5">ಏಕೆಂದರೆ ಯೋಹಾನನಾದರೋ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದನು. ಆದರೆ ಇನ್ನು ಕೆಲವೇ ದಿನಗಳಲ್ಲಿ ಪವಿತ್ರಾತ್ಮ ದೇವರಿಂದ ನೀವು ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು.</verse>
				<verse number="6">ಶಿಷ್ಯರು ಯೇಸುವಿನ ಸಂಗಡ ಇದ್ದಾಗ, “ಸ್ವಾಮೀ, ಇಸ್ರಾಯೇಲರ ರಾಜ್ಯವನ್ನು ಈ ಕಾಲದಲ್ಲಿ ಪುನಃ ಸ್ಥಾಪಿಸುವಿಯೋ?” ಎಂದು ಪ್ರಶ್ನೆ ಮಾಡಿದರು.</verse>
				<verse number="7">ಅದಕ್ಕೆ ಯೇಸು: “ತಂದೆ ತಮ್ಮ ಸ್ವಂತ ಅಧಿಕಾರದಿಂದ ನೇಮಿಸಿದ ಸಮಯವನ್ನಾಗಲಿ, ಕಾಲವನ್ನಾಗಲಿ, ತಿಳಿಯುವುದು ನಿಮ್ಮ ಕೆಲಸವಲ್ಲ.</verse>
				<verse number="8">ಆದರೆ ಪವಿತ್ರಾತ್ಮ ದೇವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯನ್ನು ಪಡೆಯುವಿರಿ. ಆಗ ನೀವು ಯೆರೂಸಲೇಮಿನಲ್ಲಿ, ಯೂದಾಯ ಪ್ರಾಂತ ಮತ್ತು ಸಮಾರ್ಯ ಪ್ರಾಂತದ ಎಲ್ಲಾ ಕಡೆಗಳಲ್ಲಿಯೂ ಹಾಗೂ ಭೂಲೋಕದ ಕೊನೆಯ ಮೇರೆಗಳವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.</verse>
				<verse number="9">ಇದನ್ನು ಹೇಳಿದ ತರುವಾಯ, ಯೇಸು ಅವರ ಕಣ್ಣೆದುರಿನಲ್ಲಿಯೇ ಸ್ವರ್ಗಕ್ಕೆ ಏರಿಹೋದರು. ಮೋಡವು ಯೇಸುವನ್ನು ಅವರ ಕಣ್ಣಿಗೆ ಮರೆಮಾಡಿತು.</verse>
				<verse number="10">ಯೇಸು ಮೇಲಕ್ಕೆ ಹೋಗುತ್ತಿರಲು ಶಿಷ್ಯರು ಆಕಾಶದ ಕಡೆಗೆ ದೃಷ್ಟಿಸಿ ನೋಡುತ್ತಿರುವಾಗ, ಬಿಳಿವಸ್ತ್ರ ಧರಿಸಿದ್ದ ಇಬ್ಬರು ಪುರುಷರು ಅವರ ಪಕ್ಕದಲ್ಲಿ ನಿಂತುಕೊಂಡು,</verse>
				<verse number="11">“ಗಲಿಲಾಯದವರೇ, ಆಕಾಶವನ್ನೇ ನೋಡುತ್ತಾ ಇಲ್ಲಿ ಏಕೆ ನಿಂತಿರುವಿರಿ? ನಿಮ್ಮ ಬಳಿಯಿಂದ ಪರಲೋಕಕ್ಕೆ ಏರಿಹೋದ ಈ ಯೇಸುವು ಪರಲೋಕಕ್ಕೆ ಹೋಗುವುದನ್ನು ನೀವು ನೋಡಿದ ರೀತಿಯಲ್ಲಿಯೇ ಹಿಂದಿರುಗಿ ಬರುವರು,” ಎಂದು ಹೇಳಿದರು.</verse>
				<verse number="12">ಅನಂತರ ಅಪೊಸ್ತಲರು ಯೆರೂಸಲೇಮಿಗೆ ಸಮೀಪದಲ್ಲಿದ್ದ ಓಲಿವ್ ಗುಡ್ಡದಿಂದ ಇಳಿದು ಯೆರೂಸಲೇಮಿಗೆ ಹಿಂದಿರುಗಿ ಹೋದರು. ಅದು ಸಬ್ಬತ್ ದಿನದಲ್ಲಿ ಪ್ರಯಾಣ ಮಾಡುವಷ್ಟು ದೂರದಲ್ಲಿತ್ತು.</verse>
				<verse number="13">ಅವರು ಹಿಂದಿರುಗಿದಾಗ, ತಾವು ವಾಸಿಸುತ್ತಿದ್ದ ಮಾಳಿಗೆ ಮೇಲಿನ ಕೋಣೆಯೊಳಗೆ ಹೋದರು. ಅವರು ಯಾರಾರೆಂದರೆ: ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ; ಫಿಲಿಪ್ಪ, ತೋಮ; ಬಾರ್ತೊಲೊಮಾಯ ಮತ್ತಾಯ; ಅಲ್ಫಾಯನ ಮಗ ಯಾಕೋಬ, ದೇಶಾಭಿಮಾನಿ ಸೀಮೋನ ಮತ್ತು ಯಾಕೋಬನ ಮಗ ಯೂದ.</verse>
				<verse number="14">ಅಲ್ಲಿ ಕೆಲವು ಮಹಿಳೆಯರು, ಯೇಸುವಿನ ತಾಯಿ ಮರಿಯಳು, ಯೇಸುವಿನ ಸಹೋದರರು, ಇವರೆಲ್ಲರು ನಿತ್ಯವೂ ಏಕಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗಿ ಸೇರುತ್ತಿದ್ದರು.</verse>
				<verse number="15">ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಸೇರಿದ್ದರು. ಅವರ ನಡುವೆ ಪೇತ್ರನು ಎದ್ದು ನಿಂತು, ಹೀಗೆಂದನು:</verse>
				<verse number="16">“ಸಹೋದರ ಸಹೋದರಿಯರೇ, ಬಹಳ ದಿನಗಳ ಹಿಂದೆ ದಾವೀದನ ಮುಖಾಂತರ ಪವಿತ್ರಾತ್ಮರು ಮುಂತಿಳಿಸಿದ ದೇವರ ವಾಕ್ಯ ಯೂದನ ವಿಷಯವಾಗಿ ನೆರವೇರಬೇಕಾಗಿತ್ತು. ಯೂದನು ಯೇಸುವನ್ನು ಬಂಧಿಸಿದವರಿಗೆ ಮಾರ್ಗದರ್ಶಕನಾಗಿದ್ದನು.</verse>
				<verse number="17">ಈ ಯೂದನು ನಮ್ಮಲ್ಲಿ ಒಬ್ಬನಾಗಿದ್ದು ಈ ಸೇವೆಯಲ್ಲಿ ಪಾಲುಗಾರನಾಗಿದ್ದನು.”</verse>
				<verse number="18">ಯೂದನು, ದ್ರೋಹ ಕೃತ್ಯದಿಂದ ಪಡೆದ ಹಣದಿಂದ ಒಂದು ಹೊಲವನ್ನು ಕೊಂಡುಕೊಂಡನು; ಅಲ್ಲಿಯೇ ಅವನು ತಲೆಕೆಳಗಾಗಿ ಬಿದ್ದು, ಹೊಟ್ಟೆ ಬಿರಿದು, ಕರುಳೆಲ್ಲಾ ಹೊರಬಂದು ಸತ್ತನು.</verse>
				<verse number="19">ಯೆರೂಸಲೇಮಿನಲ್ಲಿದ್ದ ಪ್ರತಿಯೊಬ್ಬರಿಗೂ ಈ ವಿಷಯ ತಿಳಿಯಿತು, ಹೀಗೆ ಆ ಹೊಲವನ್ನು ಅವರು ತಮ್ಮ ಭಾಷೆಯಲ್ಲಿ “ಅಕೆಲ್ದಮಾ” ಎಂದು ಕರೆದರು. “ರಕ್ತದ ಹೊಲ” ಎಂದು ಅದರ ಅರ್ಥ.</verse>
				<verse number="20">ಕೀರ್ತನೆಗಳ ಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ ‘ಅವನ ವಾಸಸ್ಥಾನವು ಹಾಳಾಗಲಿ, ಅದರಲ್ಲಿ ಯಾರೂ ವಾಸಿಸದಿರಲಿ,’ ಮತ್ತು, “ ‘ಅವನ ಹುದ್ದೆಯನ್ನು ಇನ್ನೊಬ್ಬನು ತೆಗೆದುಕೊಳ್ಳಲಿ,’</verse>
				<verse number="21">ಆದ್ದರಿಂದ, ಕರ್ತ ಆಗಿರುವ ಯೇಸು ನಮ್ಮೊಂದಿಗೆ ಇದ್ದ ಕಾಲವೆಲ್ಲಾ ನಮ್ಮ ಜೊತೆಯಲ್ಲಿರುವ ಒಬ್ಬನನ್ನು ನಾವು ಆರಿಸಬೇಕಾಗಿದೆ. ಅಂಥವನು ಯೇಸುವಿನ ಎಲ್ಲಾ ಸೇವಾ ಸಂಚಾರದಲ್ಲಿಯೂ ನಮ್ಮೊಂದಿಗೆ ಇದ್ದವನಾಗಿರಬೇಕು,</verse>
				<verse number="22">ಅಂದರೆ, ಯೋಹಾನನಿಂದ ದೀಕ್ಷಾಸ್ನಾನ ಪಡೆದ ದಿನದಿಂದ, ಯೇಸು ಸ್ವರ್ಗಕ್ಕೆ ಏರಿಹೋದ ಕಾಲದವರೆಗೆ ನಮ್ಮ ಸಂಗಡ ಇದ್ದವನಾಗಿರಬೇಕು.” ಅವನು ಯೇಸುವಿನ ಪುನರುತ್ಥಾನಕ್ಕೆ ನಮ್ಮೊಂದಿಗೆ ಸಾಕ್ಷಿಯಾಗಿರಬೇಕು.</verse>
				<verse number="23">ಆಗ ಅವರು ಇಬ್ಬರು ಪುರುಷರ ಹೆಸರುಗಳನ್ನು ಸೂಚಿಸಿದರು: ಬಾರ್ಸಬ ಎಂಬ ಹೆಸರಿನ ಯೋಸೇಫ, ಇವನನ್ನು ಯೂಸ್ತ ಎಂಬುದಾಗಿಯೂ ಕರೆಯುತ್ತಿದ್ದರು ಮತ್ತು ಇನ್ನೊಬ್ಬನು ಮತ್ತೀಯ ಎಂಬುವನು.</verse>
				<verse number="24">ಆಮೇಲೆ ಅವರು, “ಕರ್ತ ಯೇಸುವೇ, ಪ್ರತಿಯೊಬ್ಬರ ಹೃದಯವನ್ನು ನೀವು ತಿಳಿದವರು. ಈ ಸೇವೆಯಿಂದ ಯೂದನು ಭ್ರಷ್ಟನಾಗಿ ತನಗೆ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ,</verse>
				<verse number="25">ಈ ಅಪೊಸ್ತಲರ ಸೇವೆಯನ್ನು ವಹಿಸಿಕೊಳ್ಳುವುದಕ್ಕಾಗಿ, ನೀವು ಈ ಇಬ್ಬರಲ್ಲಿ ಯಾರನ್ನು ಆಯ್ಕೆ ಮಾಡಿಕೊಂಡಿರುವಿರಿ ಎಂಬುದನ್ನು ನಮಗೆ ತೋರಿಸಿರಿ,” ಎಂದು ಪ್ರಾರ್ಥನೆ ಮಾಡಿದರು.</verse>
				<verse number="26">ಅನಂತರ ಅವರು ಚೀಟು ಹಾಕಲು, ಅದು ಮತ್ತೀಯನ ಪಾಲಿಗೆ ಬಂದಿತು; ಆದ್ದರಿಂದ ಅವನು ಹನ್ನೊಂದು ಜನ ಅಪೊಸ್ತಲರೊಂದಿಗೆ ಸೇರಿದನು.</verse>
			</chapter>
			<chapter number="2">
				<verse number="1">ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬದಂದು, ಅವರೆಲ್ಲರೂ ಒಂದೇ ಸ್ಥಳದಲ್ಲಿ ಒಂದಾಗಿ ಕೂಡಿ ಬಂದಿದ್ದರು.</verse>
				<verse number="2">ಆಗ ಬೀಸುತ್ತಿರುವ ಬಿರುಗಾಳಿಯ ರಭಸವಾದ ಶಬ್ದವು ಫಕ್ಕನೆ ಪರಲೋಕದಿಂದ ಬಂದು ಅವರು ಕುಳಿತುಕೊಂಡಿದ್ದ ಮನೆಯನ್ನೆಲ್ಲಾ ತುಂಬಿಕೊಂಡಿತು.</verse>
				<verse number="3">ಅಗ್ನಿ ಜ್ವಾಲೆಗಳು ಬೆಂಕಿಯ ನಾಲಿಗೆಗಳಂತೆ ವಿಂಗಡವಾಗಿ ಬಂದು ಪ್ರತಿಯೊಬ್ಬರ ಮೇಲೆ ಇಳಿಯುವುದನ್ನು ಅವರು ಕಂಡರು.</verse>
				<verse number="4">ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಮಾತ್ರವಲ್ಲದೆ ಪವಿತ್ರಾತ್ಮ ದೇವರು ಕೊಟ್ಟ ಪ್ರೇರಣೆಯ ಪ್ರಕಾರ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡಲು ಪ್ರಾರಂಭಿಸಿದರು.</verse>
				<verse number="5">ಆಗ ಜಗತ್ತಿನ ಪ್ರತಿಯೊಂದು ದೇಶದಿಂದಲೂ ಬಂದ ದೇವಭಕ್ತಿಯುಳ್ಳ ಯೆಹೂದ್ಯರು ಯೆರೂಸಲೇಮಿನಲ್ಲಿದ್ದರು.</verse>
				<verse number="6">ಈ ಶಬ್ದ ಕೇಳಿದಾಗ, ಜನರ ಗುಂಪೊಂದು ಕೂಡಿಬಂದಿತು. ಬಂದವರೆಲ್ಲರೂ ತಮ್ಮ ತಮ್ಮ ಭಾಷೆಗಳಲ್ಲಿಯೇ ಆ ಶಿಷ್ಯರು ಮಾತಾಡುತ್ತಿರುವುದನ್ನು ಕೇಳಿ, ಆಶ್ಚರ್ಯಗೊಂಡರು.</verse>
				<verse number="7">ಅವರು ಅತ್ಯಾಶ್ಚರ್ಯವುಳ್ಳವರಾಗಿ, “ಇಲ್ಲಿ ಮಾತನಾಡುತ್ತಿರುವವರೆಲ್ಲರೂ ಗಲಿಲಾಯದವರಲ್ಲವೇ?</verse>
				<verse number="8">ನಾವೆಲ್ಲರೂ ನಮ್ಮ ನಮ್ಮ ಮಾತೃಭಾಷೆಗಳಲ್ಲಿಯೇ ಇವರು ಮಾತಾಡುತ್ತಿರುವುದನ್ನು ಕೇಳುತ್ತಿರುವುದು ಹೇಗೆ?</verse>
				<verse number="9">ಪಾರ್ಥಿಯರು, ಮೇದ್ಯರು ಹಾಗೂ ಏಲಾಮ್ಯರು, ಮೆಸೊಪೊಟೇಮಿಯ, ಯೂದಾಯ, ಕಪ್ಪದೋಕ್ಯ, ಪೊಂತ, ಏಷ್ಯಾ,</verse>
				<verse number="10">ಫ್ರುಗ್ಯ ಮತ್ತು ಪಂಫುಲ್ಯ, ಈಜಿಪ್ಟ್ ಹಾಗೂ ಕುರೇನೆದ ಹತ್ತಿರದ ಲಿಬ್ಯದ ಭಾಗಗಳ ನಿವಾಸಿಗಳು; ರೋಮ್ ಪಟ್ಟಣದಿಂದ ಬಂದ ಸಂದರ್ಶಕರು ಇಲ್ಲಿ ಬಂದಿದ್ದಾರೆ.</verse>
				<verse number="11">ಇವರಲ್ಲದೆ, ಯೆಹೂದ್ಯರು ಮತ್ತು ಯೆಹೂದಿ ವಿಶ್ವಾಸಕ್ಕೆ ಬಂದಿದ್ದವರೂ ಇಲ್ಲಿದ್ದಾರೆ. ಅವರೊಂದಿಗೆ ಕ್ರೇತದವರು ಹಾಗೂ ಅರಬೀಯರು ನಮ್ಮ ಭಾಷೆಗಳಲ್ಲಿಯೇ ದೇವರ ಮಹತ್ಕಾರ್ಯಗಳನ್ನು ಹೇಳುತ್ತಿರುವದನ್ನು ಕೇಳುತ್ತಿದ್ದೇವಲ್ಲಾ!” ಎಂದು ಹೇಳಿದರು.</verse>
				<verse number="12">ಅವರು ಆಶ್ಚರ್ಯದಿಂದಲೂ ಗಲಿಬಿಲಿಗೊಂಡವರಾಗಿಯೂ, “ಇದರ ಅರ್ಥವೇನು?” ಎಂದು ತಮ್ಮತಮ್ಮೊಳಗೆ ಪ್ರಶ್ನೆಮಾಡಿಕೊಂಡರು.</verse>
				<verse number="13">ಆದರೆ, ಅವರಲ್ಲಿ ಕೆಲವರು, ಅವರ ಬಗ್ಗೆ ಹಾಸ್ಯಮಾಡುತ್ತಾ, “ಇವರು ಕುಡಿದು ಮತ್ತರಾಗಿದ್ದಾರೆ,” ಎಂದರು.</verse>
				<verse number="14">ಆಗ ಹನ್ನೊಂದು ಜನರೊಂದಿಗೆ ಪೇತ್ರನು ಎದ್ದು ನಿಂತುಕೊಂಡು, ಜನಸಮೂಹವನ್ನು ಉದ್ದೇಶಿಸಿ ಹೇಳಿದ್ದೇನೆಂದರೆ: “ಯೆಹೂದ್ಯರೇ, ಯೆರೂಸಲೇಮಿನ ಸರ್ವನಿವಾಸಿಗಳೇ, ಇದರ ಬಗ್ಗೆ ನಾನು ವಿವರಿಸುತ್ತೇನೆ, ಕೇಳಿರಿ. ನಾನು ಹೇಳುವುದನ್ನು ಜಾಗರೂಕತೆಯಿಂದ ಆಲಿಸಿರಿ.</verse>
				<verse number="15">ನೀವು ಊಹಿಸಿದಂತೆ, ಈ ಜನರು ಕುಡಿದು ಮತ್ತರಾಗಿಲ್ಲ. ಈಗ ಸಮಯ ಬೆಳಿಗ್ಗೆ ಒಂಬತ್ತು ಗಂಟೆ!</verse>
				<verse number="16">ಇದು ಪ್ರವಾದಿ ಯೋವೇಲನ ಪ್ರವಾದನೆಯ ನೆರವೇರುವಿಕೆಯಾಗಿದೆ:</verse>
				<verse number="17">“ದೇವರು ಹೇಳುವುದೇನೆಂದರೆ: ‘ಅಂತ್ಯ ದಿನಗಳಲ್ಲಿ ನನ್ನ ಆತ್ಮವನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು, ನಿಮ್ಮ ಯುವಜನರಿಗೆ ದರ್ಶನಗಳು ಕಾಣುವವು, ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು.</verse>
				<verse number="18">ಆ ದಿನಗಳಲ್ಲಿ, ನನ್ನ ದಾಸ ದಾಸಿಯರ ಮೇಲೆ, ನನ್ನ ಆತ್ಮವನ್ನು ಸುರಿಸುವೆನು, ಅವರು ಪ್ರವಾದಿಸುವರು.</verse>
				<verse number="19">ನಾನು ಆಕಾಶದಲ್ಲಿ ಅದ್ಭುತಗಳನ್ನು, ಭೂಮಿಯಲ್ಲಿ ಸೂಚಕಕಾರ್ಯಗಳನ್ನು, ರಕ್ತ, ಬೆಂಕಿ, ಹಬೆಯನ್ನು ತೋರಿಸುವೆನು.</verse>
				<verse number="20">ಕರ್ತದೇವರ ಮಹಿಮೆಯುಳ್ಳ ಮಹಾದಿನವೂ ಬರುವುದಕ್ಕೆ ಮೊದಲು ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.</verse>
				<verse number="21">ಆಗ ಕರ್ತದೇವರ ಹೆಸರನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆ ಆಗುವುದು.’</verse>
				<verse number="22">“ಇಸ್ರಾಯೇಲ್ ಜನರೇ, ಈ ವಿಷಯವನ್ನು ಕೇಳಿರಿ: ದೇವರು ನಜರೇತಿನ ಯೇಸುಸ್ವಾಮಿಯವರ ಮುಖಾಂತರ ನಿಮ್ಮ ಮಧ್ಯದಲ್ಲಿ ಅದ್ಭುತಕಾರ್ಯಗಳನ್ನೂ ಆಶ್ಚರ್ಯಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡೆಸಿದ್ದರಿಂದ, ಯೇಸು ದೇವರ ಮೆಚ್ಚಿಕೆ ಪಡೆದವರಾಗಿದ್ದಾರೆಂಬುದನ್ನು, ನೀವೇ ತಿಳಿದಿರುವಿರಿ.</verse>
				<verse number="23">ದೇವರು ತಾವು ಮುಂಚಿತವಾಗಿ ನಿರ್ಣಯಿಸಿದ ಪ್ರಕಾರವೂ ತಾವು ಮೊದಲೇ ತಿಳಿದಿರುವಂತೆ ದೇವರು ಯೇಸುವನ್ನು ತಾವಾಗಿಯೇ ನಿಮಗೆ ಒಪ್ಪಿಸಿಕೊಟ್ಟರು. ನೀವಾದರೋ ದುಷ್ಟರ ಸಹಾಯದಿಂದ ಯೇಸುವನ್ನು ಶಿಲುಬೆಗೆ ಹಾಕಿ ಕೊಲೆಮಾಡಿದಿರಿ.</verse>
				<verse number="24">ಆದರೆ ದೇವರು ಯೇಸುವನ್ನು ಮರಣ ವೇದನೆಯಿಂದ ಬಿಡಿಸಿ ಜೀವಂತವಾಗಿ ಎಬ್ಬಿಸಿದರು. ಏಕೆಂದರೆ ಯೇಸುವನ್ನು ಹಿಡಿದಿಟ್ಟುಕೊಂಡಿರಲು ಮರಣಕ್ಕೆ ಸಾಧ್ಯವಾಗಲಿಲ್ಲ.</verse>
				<verse number="25">ದಾವೀದನು ಯೇಸುಸ್ವಾಮಿಯವರ ಬಗ್ಗೆ ಹೀಗೆ ಹೇಳಿದ್ದಾನೆ: “ ‘ನಾನು ಕರ್ತದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ. ನಾನು ಕದಲದಂತೆ ಕರ್ತದೇವರು ನನ್ನ ಬಲಗಡೆಯಲ್ಲಿದ್ದಾರೆ.</verse>
				<verse number="26">ಆದ್ದರಿಂದ ನನ್ನ ಹೃದಯ ಹರ್ಷಿಸುವುದು, ನನ್ನ ನಾಲಿಗೆ ಉಲ್ಲಾಸಗೊಳ್ಳುವುದು; ನನ್ನ ಶರೀರವು ಸಹ ನಿರೀಕ್ಷೆಯಿಂದ ನೆಲೆಯಾಗಿರುವುದು.</verse>
				<verse number="27">ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ, ನಿಮ್ಮ ಪರಿಶುದ್ಧ ವ್ಯಕ್ತಿಯನ್ನು ಕೊಳೆಯುವಂತೆ ಬಿಡುವುದೇ ಇಲ್ಲ.</verse>
				<verse number="28">ನೀವು ನನಗೆ ಜೀವಮಾರ್ಗಗಳನ್ನು ತಿಳಿಯಪಡಿಸಿರುವಿರಿ; ನಿಮ್ಮ ಸನ್ನಿಧಿಯಲ್ಲಿ ನನ್ನನ್ನು ಆನಂದಭರಿತನಾಗ ಮಾಡುವಿರಿ.’</verse>
				<verse number="29">“ಪ್ರಿಯರೇ, ಮೂಲಪಿತೃ ದಾವೀದನು ಮರಣಹೊಂದಿದನು; ಸಮಾಧಿಮಾಡಲಾಯಿತು. ಇಂದಿಗೂ ಅವನ ಸಮಾಧಿ ನಮ್ಮಲ್ಲಿದೆ ಎಂಬುದನ್ನು ನಾನು ನಿಮಗೆ ಧೈರ್ಯದಿಂದ ಹೇಳಬಲ್ಲೆ.</verse>
				<verse number="30">ಆದರೆ ಪ್ರವಾದಿಯಾಗಿದ್ದ ದಾವೀದನ ಸಂತತಿಯವರಲ್ಲಿ ಒಬ್ಬರನ್ನು ಅವನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು, ಎಂದು ಆಣೆಯಿಟ್ಟು ದೇವರು ವಾಗ್ದಾನ ಮಾಡಿದ್ದನ್ನು ದಾವೀದನು ತಿಳಿದಿದ್ದನು.</verse>
				<verse number="31">ದಾವೀದನು ಕ್ರಿಸ್ತ ಯೇಸುವಿನ ಪುನರುತ್ಥಾನದ ಬಗ್ಗೆ ಮುಂಚಿತವಾಗಿಯೇ ನೋಡಿ, ಹೀಗೆ ಮಾತನಾಡಿದನು: ‘ಅವರನ್ನು ಪಾತಾಳದಲ್ಲಿಯೇ ಬಿಡಲಿಲ್ಲ; ಅವರ ದೇಹವು ಕೊಳೆಯುವ ಅವಸ್ಥೆಯನ್ನು ಕಾಣಲಿಲ್ಲ.’</verse>
				<verse number="32">ದೇವರು ಈ ಯೇಸುವನ್ನೇ ಮರಣದಿಂದ ಎಬ್ಬಿಸಿದರು. ಇದಕ್ಕೆ ನಾವೆಲ್ಲರೂ ಸಾಕ್ಷಿಗಳು.</verse>
				<verse number="33">ಆದ್ದರಿಂದ ಯೇಸು ದೇವರ ಬಲಗಡೆಗೆ ಏರಿಹೋಗಿ ವಾಗ್ದಾನಮಾಡಿದ ಪವಿತ್ರಾತ್ಮ ದೇವರನ್ನು ತಂದೆಯಿಂದ ಪಡೆದುಕೊಂಡರು. ಈಗ ನೀವು ಕಂಡು ಕೇಳಿರುವ ಆ ಪವಿತ್ರಾತ್ಮ ವರವನ್ನು ಯೇಸುವೇ ಇವರ ಮೇಲೆ ಸುರಿಸಿದ್ದಾರೆ.</verse>
				<verse number="34">ದಾವೀದನು ಪರಲೋಕಕ್ಕೆ ಏರಿಹೋಗಲಿಲ್ಲವಾದರೂ ಹೀಗೆ ಹೇಳಿದ್ದಾನೆ: “ ‘ಕರ್ತದೇವರು ನನ್ನ ಕರ್ತದೇವರಿಗೆ: “ನಾನು ನಿನ್ನ ವಿರೋಧಿಗಳನ್ನು</verse>
				<verse number="35">ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕುಳಿತುಕೊಂಡಿರು.” ’</verse>
				<verse number="36">“ಆದ್ದರಿಂದ ನೀವು ಶಿಲುಬೆಗೇರಿಸಿದ ಈ ಯೇಸುವನ್ನೇ ದೇವರು ಕರ್ತ ಹಾಗೂ ಕ್ರಿಸ್ತ ಆಗಿಯೂ ಮಾಡಿದ್ದಾರೆ ಎಂಬುದು ಎಲ್ಲಾ ಇಸ್ರಾಯೇಲ್ ಮನೆತನದವರಿಗೆ ಸ್ಪಷ್ಟವಾಗಿ ತಿಳಿದಿರಲಿ,” ಎಂದನು.</verse>
				<verse number="37">ಜನರು ಇದನ್ನು ಕೇಳಿದಾಗ ಅವರಿಗೆ ಹೃದಯದಲ್ಲಿ ಅಲಗು ನೆಟ್ಟಂತಾಗಿ, “ಸಹೋದರರೇ, ನಾವೇನು ಮಾಡಬೇಕು?” ಎಂದು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ ಕೇಳಿದರು.</verse>
				<verse number="38">ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿಯೊಬ್ಬನೂ ಪಶ್ಚಾತ್ತಾಪಪಟ್ಟು, ನಿಮ್ಮ ಪಾಪಗಳ ಕ್ಷಮೆಗಾಗಿ ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಿರಿ. ಆಗ ನೀವು ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಿರಿ.</verse>
				<verse number="39">ಈ ವಾಗ್ದಾನವು ನಿಮಗೂ ನಿಮ್ಮ ಮಕ್ಕಳಿಗೂ ದೂರ ಇರುವ ಎಲ್ಲರಿಗೂ ನಮ್ಮ ಕರ್ತದೇವರು ತಮ್ಮ ಕಡೆಗೆ ಕರೆಯುವ ಎಲ್ಲರಿಗಾಗಿಯೂ ಇರುವುದು,” ಎಂದನು.</verse>
				<verse number="40">ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, ಸಾಕ್ಷಿ ನುಡಿದು, “ಈ ಕೆಟ್ಟ ಸಂತತಿಯಿಂದ ನಿಮ್ಮನ್ನು ರಕ್ಷಿಸಿಕೊಳ್ಳಿರಿ,” ಎಂದು ಹೇಳಿದನು.</verse>
				<verse number="41">ಪೇತ್ರನ ಸಂದೇಶವನ್ನು ಸ್ವೀಕರಿಸಿದವರು ದೀಕ್ಷಾಸ್ನಾನ ಪಡೆದರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿದರು.</verse>
				<verse number="42">ಅವರೆಲ್ಲರು ಅಪೊಸ್ತಲರ ಬೋಧನೆಯಲ್ಲಿ, ಅನ್ಯೋನ್ಯತೆಯಲ್ಲಿ, ರೊಟ್ಟಿ ಮುರಿಯುವುದರಲ್ಲಿ, ಪ್ರಾರ್ಥನೆ ಮಾಡುವುದರಲ್ಲಿ ತಮ್ಮನ್ನು ಸಮರ್ಪಿಸಿಕೊಂಡು,</verse>
				<verse number="43">ಪ್ರತಿಯೊಬ್ಬರೂ ಭಯಭಕ್ತಿಉಳ್ಳವರಾಗಿದ್ದರು. ಅಪೊಸ್ತಲರು ಅನೇಕ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದರು.</verse>
				<verse number="44">ವಿಶ್ವಾಸಿಗಳೆಲ್ಲರೂ ಒಟ್ಟಾಗಿದ್ದು, ತಮ್ಮಲ್ಲಿರುವ ಪ್ರತಿಯೊಂದನ್ನೂ ಹಂಚಿಕೊಳ್ಳುತ್ತಿದ್ದರು.</verse>
				<verse number="45">ಅವರು ಆಸ್ತಿಪಾಸ್ತಿಯನ್ನು ಮಾರಿ ಅವರವರ ಅವಶ್ಯಕತೆಗೆ ಅನುಸಾರವಾಗಿ ಎಲ್ಲರಿಗೂ ಹಂಚುತ್ತಿದ್ದರು.</verse>
				<verse number="46">ಪ್ರತಿದಿನವೂ ದೇವಾಲಯದಲ್ಲಿ ಒಮ್ಮನಸ್ಸಿನಿಂದ ಸಭೆ ಕೂಡಿಬರುವುದನ್ನು ಕ್ರಮವಾಗಿ ಮುಂದುವರೆಸಿದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಆನಂದದಿಂದಲೂ ಸರಳ ಹೃದಯದಿಂದಲೂ ಊಟಮಾಡುತ್ತಿದ್ದರು.</verse>
				<verse number="47">ಅವರು ದೇವರಿಗೆ ಸ್ತೋತ್ರ ಮಾಡುತ್ತಾ, ಜನರೆಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ರಕ್ಷಣೆ ಹೊಂದಿದವರನ್ನು ಕರ್ತ ಯೇಸುವು ಪ್ರತಿದಿನವೂ ಅವರೊಂದಿಗೆ ಸೇರಿಸುತ್ತಿದ್ದರು.</verse>
			</chapter>
			<chapter number="3">
				<verse number="1">ಒಂದು ಮಧ್ಯಾಹ್ನ ಮೂರು ಗಂಟೆಗೆ ಪ್ರಾರ್ಥನೆಯ ಸಮಯದಲ್ಲಿ ಪೇತ್ರ ಹಾಗೂ ಯೋಹಾನನು ದೇವಾಲಯಕ್ಕೆ ಹೋದರು.</verse>
				<verse number="2">ದೇವಾಲಯದೊಳಗೆ ಹೋಗುವವರಿಂದ ಭಿಕ್ಷೆ ಬೇಡಲು ಪ್ರತಿದಿನ “ಸುಂದರದ್ವಾರ” ಎಂದು ಕರೆಯಲಾಗುತ್ತಿದ್ದ ದೇವಾಲಯದ ದ್ವಾರದ ಬಳಿಯಲ್ಲಿ ಹುಟ್ಟುಕುಂಟನೊಬ್ಬನನ್ನು ಕೆಲವರು ಹೊತ್ತುಕೊಂಡು ಬಂದು ಬಿಡುತ್ತಿದ್ದರು.</verse>
				<verse number="3">ಅವನು ಪೇತ್ರ, ಯೋಹಾನರು ದೇವಾಲಯದೊಳಗೆ ಪ್ರವೇಶಿಸುತ್ತಿರುವುದನ್ನು ಕಂಡು, ಭಿಕ್ಷೆ ಬೇಡಿದನು.</verse>
				<verse number="4">ಪೇತ್ರ ಯೋಹಾನರಿಬ್ಬರೂ ಭಿಕ್ಷುಕನನ್ನು ನೇರವಾಗಿ ದೃಷ್ಟಿಸಿ ನೋಡಿದರು. ಪೇತ್ರನು ಭಿಕ್ಷುಕನಿಗೆ, “ನಮ್ಮನ್ನು ನೋಡು!” ಎಂದು ಹೇಳಿದನು.</verse>
				<verse number="5">ಅವರಿಂದ ಏನಾದರೂ ದೊರೆಯುವುದೆಂದು ನಿರೀಕ್ಷಿಸಿ ಅವನು ಅವರ ಕಡೆಗೆ ಲಕ್ಷ್ಯವಿಟ್ಟು ನೋಡಿದನು.</verse>
				<verse number="6">ಆಗ ಪೇತ್ರನು, “ಬೆಳ್ಳಿಬಂಗಾರ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ. ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಲ್ಲಿ, ಎದ್ದು ನಡೆ,” ಎಂದು ಹೇಳಿ,</verse>
				<verse number="7">ಬಲಗೈ ಹಿಡಿದೆಬ್ಬಿಸಿದಾಗ ಕೂಡಲೇ ಆ ಮನುಷ್ಯನ ಪಾದ ಮತ್ತು ಹರಡುಗಳು ಬಲಗೊಂಡವು.</verse>
				<verse number="8">ಅವನು ಜಿಗಿದು ನಿಂತು ನಡೆದಾಡಲು ಪ್ರಾರಂಭಿಸಿದನು. ಆಮೇಲೆ ನಡೆಯುತ್ತಾ, ಕುಣಿಯುತ್ತಾ, ದೇವರ ಸ್ತೋತ್ರ ಮಾಡುತ್ತಾ, ಅವರೊಂದಿಗೆ ದೇವಾಲಯದೊಳಗೆ ಪ್ರವೇಶಿಸಿದನು.</verse>
				<verse number="9">ಅವನು ನಡೆಯುವುದನ್ನೂ ದೇವರ ಸ್ತೋತ್ರ ಮಾಡುತ್ತಿರುವುದನ್ನೂ ಜನರೆಲ್ಲರೂ ಕಂಡರು.</verse>
				<verse number="10">ಅವನು ದೇವಾಲಯದ “ಸುಂದರದ್ವಾರದ” ಬಳಿಯಲ್ಲಿ ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದ ಮನುಷ್ಯನೇ ಎಂದು ಗುರುತಿಸಿದರು. ಅವನಿಗೆ ಸಂಭವಿಸಿದ್ದರ ಬಗ್ಗೆ ಅವರು ವಿಸ್ಮಯಗೊಂಡು ಬೆರಗಾದರು.</verse>
				<verse number="11">ಭಿಕ್ಷುಕನು ಇನ್ನೂ ಪೇತ್ರ ಯೋಹಾನರೊಂದಿಗೆ ಇದ್ದಾಗ, ಆಶ್ಚರ್ಯಚಕಿತರಾದ ಜನರೆಲ್ಲರು ಅವರಿದ್ದ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳಕ್ಕೆ ಓಡಿ ಬಂದರು.</verse>
				<verse number="12">ಜನರನ್ನು ಕಂಡು ಪೇತ್ರನು ಅವರಿಗೆ ಹೇಳಿದ ಮಾತುಗಳಿವು: “ಇಸ್ರಾಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮ ಸ್ವಂತ ಬಲದಿಂದಾಗಲಿ, ಭಕ್ತಿಯಿಂದಾಗಲಿ ಈ ಮನುಷ್ಯನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಿ ನಮ್ಮ ಕಡೆಗೆ ಏಕೆ ನೋಡುತ್ತಿರುವಿರಿ?</verse>
				<verse number="13">ಅಬ್ರಹಾಮನ, ಇಸಾಕನ, ಯಾಕೋಬನ ದೇವರು, ನಮ್ಮ ಪಿತೃಗಳ ದೇವರು, ತಮ್ಮ ಸೇವಕರಾದ ಯೇಸುವನ್ನು ಮಹಿಮೆಪಡಿಸಿದ್ದಾರೆ. ಅವರನ್ನು ಬಿಡಿಸಬೇಕೆಂದು ಪಿಲಾತನು ನಿರ್ಣಯಿಸಿಕೊಂಡಿದ್ದರೂ ನೀವು ಯೇಸುವನ್ನು ಕೊಲ್ಲುವುದಕ್ಕೆ ಒಪ್ಪಿಸಿಕೊಟ್ಟು ಪಿಲಾತನ ಮುಂದೆ ಅವರನ್ನು ನಿರಾಕರಿಸಿದಿರಿ.</verse>
				<verse number="14">ಆದರೆ ನೀವು ಪವಿತ್ರರೂ ನೀತಿವಂತರೂ ಆಗಿರುವ ಯೇಸುವನ್ನು ನಿರಾಕರಿಸಿ ಆ ಕೊಲೆಗಾರನನ್ನು ನಿಮಗೆ ಬಿಡುಗಡೆ ಮಾಡಿಕೊಡಬೇಕೆಂದು ಕೇಳಿಕೊಂಡಿರಿ.</verse>
				<verse number="15">ಜೀವದ ಒಡೆಯನನ್ನು ನೀವು ಕೊಂದಿರಿ. ದೇವರಾದರೋ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.</verse>
				<verse number="16">ಯೇಸುವಿನ ನಾಮದಲ್ಲಿಟ್ಟ ವಿಶ್ವಾಸದಿಂದಲೇ ನೀವು ಕಂಡು ತಿಳಿದಿರುವ ಈ ಮನುಷ್ಯನು ಬಲಹೊಂದಿದ್ದಾನೆ. ಯೇಸುವಿನ ನಾಮವೂ ಅವರ ಮೂಲಕವಾಗಿ ಬರುವ ನಂಬಿಕೆಯೂ ಇವನಿಗೆ ಸಂಪೂರ್ಣ ಸ್ವಸ್ಥತೆಯನ್ನು ತಂದುಕೊಟ್ಟಿದೆ. ನೀವೆಲ್ಲರೂ ಇದನ್ನು ನೋಡಿದ್ದೀರಿ.</verse>
				<verse number="17">“ಈಗ, ಪ್ರಿಯರೇ, ನೀವು ಅಜ್ಞಾನದಿಂದ ಹಾಗೆ ವರ್ತಿಸಿದಿರೆಂದು ನನಗೆ ಗೊತ್ತು. ಹಾಗೆಯೇ ನಿಮ್ಮ ನಾಯಕರೂ ಮಾಡಿದರು.</verse>
				<verse number="18">ಆದರೆ ತಮ್ಮ ಕ್ರಿಸ್ತ ಯೇಸು ಹಿಂಸೆಗೊಳಗಾಗಬೇಕೆಂದು, ಎಲ್ಲಾ ಪ್ರವಾದಿಗಳ ಬಾಯಿಯ ಮುಖಾಂತರ ದೇವರು ಮುಂತಿಳಿಸಿದ್ದನ್ನು ಈ ರೀತಿ ನೆರವೇರಿಸಿದರು.</verse>
				<verse number="19">ಆದ್ದರಿಂದ ನಿಮ್ಮ ಪಾಪಗಳು ತೊಳೆದುಹೋಗುವಂತೆ ಪಶ್ಚಾತ್ತಾಪಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಿರಿ. ಆಗ ನಿಮ್ಮ ಪಾಪಗಳು ಪರಿಹಾರವಾಗಿ ಕರ್ತ ದೇವರಿಂದ ವಿಶ್ರಾಂತಿಯ ಕಾಲಗಳು ನಿಮಗೆ ಒದಗಿ ಬರುವವು.</verse>
				<verse number="20">ದೇವರು ನಿಮಗೋಸ್ಕರ ನೇಮಕವಾಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿಕೊಡುವರು.</verse>
				<verse number="21">ದೇವರು ತಮ್ಮ ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲದ ಹಿಂದೆಯೇ ವಾಗ್ದಾನಮಾಡಿದ ಪ್ರಕಾರ, ಅವರು ಸಮಸ್ತವನ್ನು ಪುನಃಸ್ಥಾಪಿಸಿದರು. ಆ ಕಾಲ ಬರುವವರೆಗೆ ಕ್ರಿಸ್ತ ಯೇಸು ಪರಲೋಕದಲ್ಲಿಯೇ ಇರುವರು.</verse>
				<verse number="22">ಮೋಶೆಯು ಹೇಳಿದ್ದೇನೆಂದರೆ: ‘ನಿಮ್ಮ ಕರ್ತದೇವರು ನಿಮ್ಮ ಸ್ವಂತ ಸಹೋದರರೊಳಗಿಂದ ನನ್ನಂಥ ಒಬ್ಬ ಪ್ರವಾದಿಯನ್ನು ನಿಮಗಾಗಿ ಎಬ್ಬಿಸುವರು. ಅವರು ನಿಮಗೆ ಹೇಳುವ ಪ್ರತಿಯೊಂದಕ್ಕೂ ವಿಧೇಯರಾಗಿರಬೇಕು.</verse>
				<verse number="23">ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ತನ್ನ ಜನರೊಳಗಿಂದ ಸಂಪೂರ್ಣವಾಗಿ ತೆಗೆಯಲಾಗುವುದು.’</verse>
				<verse number="24">“ಸಮುಯೇಲನು ಮೊದಲುಗೊಂಡು, ಮಾತನಾಡಿದ ಎಲ್ಲಾ ಪ್ರವಾದಿಗಳು ಕ್ರಮವಾಗಿ ಈ ದಿನಗಳನ್ನು ಕುರಿತು ಮುಂತಿಳಿಸಿದ್ದಾರೆ.</verse>
				<verse number="25">ನೀವು ಪ್ರವಾದಿಗಳ ಮತ್ತು ನಿಮ್ಮ ಪಿತೃಗಳೊಂದಿಗೆ ದೇವರು ಮಾಡಿಕೊಂಡ ಒಡಂಬಡಿಕೆಯ ಮಕ್ಕಳಾಗಿದ್ದೀರಿ. ಏಕೆಂದರೆ ದೇವರು, ‘ನಿನ್ನ ಸಂತತಿಯ ಮುಖಾಂತರವಾಗಿ ಭೂಲೋಕದ ಎಲ್ಲಾ ಕುಟುಂಬಗಳಿಗೆ ಆಶೀರ್ವಾದವುಂಟಾಗುವುದು,’ ಎಂದು ಅಬ್ರಹಾಮನಿಗೆ ಹೇಳಿದರು.</verse>
				<verse number="26">ದೇವರು ತಮ್ಮ ಸೇವಕರಾದ ಯೇಸುವನ್ನು ಜೀವಂತವಾಗಿ ಎಬ್ಬಿಸಿದಾಗ, ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ದುರ್ಮಾರ್ಗಗಳಿಂದ ತಿರುಗಿಸಿ ನಿಮ್ಮನ್ನು ಮೊಟ್ಟಮೊದಲು ಆಶೀರ್ವದಿಸಲು ಯೇಸುವನ್ನು ನಿಮ್ಮ ಬಳಿಗೆ ಕಳುಹಿಸಿದರು.”</verse>
			</chapter>
			<chapter number="4">
				<verse number="1">ಪೇತ್ರ ಮತ್ತು ಯೋಹಾನರು ಜನರೊಂದಿಗೆ ಮಾತನಾಡುತ್ತಿದ್ದಾಗಲೇ, ಯಾಜಕರೂ ದೇವಾಲಯದ ದಳಪತಿಯೂ ಸದ್ದುಕಾಯರೂ ಅವರ ಬಳಿಗೆ ಬಂದರು.</verse>
				<verse number="2">ಯೇಸುವಿನಲ್ಲಿ ಸತ್ತವರಿಗೆ ಪುನರುತ್ಥಾನ ಉಂಟು ಎಂದು ಅಪೊಸ್ತಲರು ಜನರಿಗೆ ಬೋಧಿಸುತ್ತಿದ್ದರಿಂದ ಅವರು ಬಹಳ ಬೇಸರಗೊಂಡರು.</verse>
				<verse number="3">ಅವರು ಪೇತ್ರ ಯೋಹಾನರನ್ನು ಬಂಧಿಸಿ, ಸಂಜೆಯಾದ್ದರಿಂದ ಮರುದಿನದವರೆಗೆ ಅವರನ್ನು ಸೆರೆಮನೆಯಲ್ಲಿ ಹಾಕಿದರು.</verse>
				<verse number="4">ಆದರೆ ಸಂದೇಶವನ್ನು ಕೇಳಿದವರಲ್ಲಿ ಅನೇಕರು ನಂಬಿದರು. ಅವರ ಸಂಖ್ಯೆ ಸುಮಾರು ಐದು ಸಾವಿರಕ್ಕೇರಿತು.</verse>
				<verse number="5">ಮರುದಿನ ಅಧಿಕಾರಿಗಳು, ಹಿರಿಯರು, ನಿಯಮ ಬೋಧಕರು ಯೆರೂಸಲೇಮಿನಲ್ಲಿ ಸಭೆ ಸೇರಿದರು.</verse>
				<verse number="6">ಮಹಾಯಾಜಕ ಅನ್ನನೂ ಹಾಗೂ ಮಹಾಯಾಜಕನ ಕುಟುಂಬದವರು ಕಾಯಫ, ಯೋಹಾನ ಮತ್ತು ಅಲೆಕ್ಸಾಂದ್ರ ಅಲ್ಲಿದ್ದರು.</verse>
				<verse number="7">ಅವರು ಪೇತ್ರ ಯೋಹಾನರನ್ನು ತಮ್ಮೆದುರಿನಲ್ಲಿ ನಿಲ್ಲಿಸಿ ಅವರಿಗೆ, “ಯಾವ ಶಕ್ತಿಯಿಂದ ಇಲ್ಲವೆ, ಯಾವ ಹೆಸರಿನಿಂದ ನೀವಿದನ್ನು ಮಾಡಿದಿರಿ?” ಎಂದು ಪ್ರಶ್ನಿಸಿದರು.</verse>
				<verse number="8">ಆಗ ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ, “ಜನರ ಅಧಿಕಾರಿಗಳೇ, ಜನರ ಹಿರಿಯರೇ!</verse>
				<verse number="9">ನಾವು ಒಬ್ಬ ಕುಂಟನಿಗೆ ಮಾಡಿದ ಸತ್ಕಾರ್ಯದ ಬಗ್ಗೆ, ಅವನು ಸ್ವಸ್ಥನಾದದ್ದು ಹೇಗೆಂದು ನೀವು ನಮ್ಮನ್ನು ಇಂದು ಪ್ರಶ್ನಿಸುತ್ತಿರುವಿರಿ.</verse>
				<verse number="10">ನಿಮಗೂ ಎಲ್ಲಾ ಇಸ್ರಾಯೇಲ್ ಜನರಿಗೂ ಇದು ತಿಳಿದಿರಲಿ: ನೀವು ಯೇಸುವನ್ನು ಶಿಲುಬೆಗೆ ಹಾಕಿದಿರಿ. ಆದರೆ ದೇವರು ಸತ್ತವರೊಳಗಿಂದ ಎಬ್ಬಿಸಿದ ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಿಂದಲೇ ಈ ಮನುಷ್ಯನು ಪೂರ್ಣ ಸ್ವಸ್ಥನಾಗಿ ನಿಮ್ಮೆದುರಿನಲ್ಲಿ ನಿಂತಿರುವನು.</verse>
				<verse number="11">ಪವಿತ್ರ ವೇದದಲ್ಲಿ, “ ‘ಮನೆ ಕಟ್ಟುವವರಾದ ನೀವು ತಿರಸ್ಕರಿಸಿದ ಕಲ್ಲು ಮುಖ್ಯವಾದ ಮೂಲೆಗಲ್ಲಾಯಿತು,’ ಎಂದು ಬರೆದಿರುವುದು ಈ ಯೇಸುವಿನ ಬಗ್ಗೆಯೇ.</verse>
				<verse number="12">ಯೇಸು ಅಲ್ಲದೆ ಬೇರೆ ಯಾರಿಂದಲೂ ರಕ್ಷಣೆಯು ಇಲ್ಲ, ಏಕೆಂದರೆ ಆಕಾಶದ ಕೆಳಗೆ ಮನುಷ್ಯರೊಳಗೆ ಆ ಹೆಸರಲ್ಲದೇ ಬೇರೆ ಯಾವ ಹೆಸರಿನಿಂದಲೂ ರಕ್ಷಣೆಯಾಗುವುದಿಲ್ಲ,” ಎಂದನು.</verse>
				<verse number="13">ಪೇತ್ರ, ಯೋಹಾನರ ಧೈರ್ಯವನ್ನು ಅವರು ಕಂಡಾಗ, ಇವರು ವಿದ್ಯೆ ಕಲಿಯದ ಸಾಮಾನ್ಯ ಜನರೆಂದು ತಿಳಿದು ಬಹು ಆಶ್ಚರ್ಯಚಕಿತರಾಗಿ, ಇವರು ಯೇಸುವಿನೊಂದಿಗೆ ಇದ್ದವರು ಎಂಬುದನ್ನು ಗುರುತಿಸಿಕೊಂಡರು.</verse>
				<verse number="14">ಆದರೆ ಗುಣಹೊಂದಿದ ಮನುಷ್ಯನು ಅವರೊಂದಿಗೆ ನಿಂತುಕೊಂಡಿದ್ದನ್ನು ಅವರು ಕಂಡಾಗ ಇವರಿಗೆ ವಿರೋಧವಾಗಿ, ಏನನ್ನೂ ಹೇಳಲು ಸಾಧ್ಯವಾಗಲಿಲ್ಲ.</verse>
				<verse number="15">ಆದ್ದರಿಂದ ಇವರನ್ನು ನ್ಯಾಯಸಭೆಯಿಂದ ಹೊರಗೆ ಹೋಗುವಂತೆ ಆಜ್ಞಾಪಿಸಿ ಒಬ್ಬರೊಂದಿಗೊಬ್ಬರು ಚರ್ಚೆಮಾಡಿ,</verse>
				<verse number="16">“ಈ ಮನುಷ್ಯರನ್ನು ನಾವು ಏನು ಮಾಡೋಣ? ಯೆರೂಸಲೇಮಿನ ಪ್ರತಿಯೊಬ್ಬ ನಿವಾಸಿಯೂ ಇವರು ಗಮನಾರ್ಹವಾದ ಅದ್ಭುತವನ್ನು ಮಾಡಿದ್ದಾರೆಂಬುದನ್ನು ತಿಳಿದಿದ್ದಾರೆ. ಇದನ್ನು ನಾವೂ ಅಲ್ಲಗಳೆಯುವುದಕ್ಕಾಗುವುದಿಲ್ಲ.</verse>
				<verse number="17">ಆದರೆ ಈ ವಿಷಯ ಜನರಲ್ಲಿ ಹೆಚ್ಚು ಪ್ರಸಾರವಾಗದಂತೆ ನಿಲ್ಲಿಸಲು, ಇವರು ಈ ನಾಮದಲ್ಲಿ ಇನ್ನೆಂದೂ ಯಾರೊಂದಿಗೂ ಮಾತನಾಡಬಾರದೆಂದು ಇವರಿಗೆ ಎಚ್ಚರಿಕೆ ಕೊಡೋಣ,” ಎಂದು ಯೋಚಿಸಿದರು.</verse>
				<verse number="18">ಅವರು ಶಿಷ್ಯರನ್ನು ಸಭೆಯಲ್ಲಿ ಕರೆದು, “ಯೇಸುವಿನ ಹೆಸರಿನಲ್ಲಿ ಮಾತನಾಡಲೂಬಾರದು, ಬೋಧಿಸಲೂಬಾರದು,” ಎಂದು ಆಜ್ಞಾಪಿಸಿದರು.</verse>
				<verse number="19">ಆದರೆ ಪೇತ್ರ ಮತ್ತು ಯೋಹಾನರು, “ದೇವರಿಗಿಂತ ಹೆಚ್ಚಾಗಿ ನಿಮಗೆ ಕಿವಿಗೊಡುವುದು ದೇವರ ದೃಷ್ಟಿಯಲ್ಲಿ ಸರಿಯಾದದ್ದೋ? ಎಂಬುದರ ಬಗ್ಗೆ ನೀವೇ ತೀರ್ಮಾನ ಮಾಡಿಕೊಳ್ಳಿರಿ.</verse>
				<verse number="20">ಏಕೆಂದರೆ ಕಂಡಿದ್ದನ್ನೂ ಕೇಳಿದ್ದನ್ನೂ ಕುರಿತು ನಾವು ಮಾತನಾಡದೆ ಇರಲಾರೆವು,” ಎಂದು ಉತ್ತರಕೊಟ್ಟರು.</verse>
				<verse number="21">ಅನಂತರ ನ್ಯಾಯಸಭೆಯವರು ಅವರನ್ನು ಬೆದರಿಸಿ ಕಳುಹಿಸಿಬಿಟ್ಟರು. ಅಲ್ಲಿ ಸಂಭವಿಸಿದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಾ ಇದ್ದುದರಿಂದ, ಪೇತ್ರ ಯೋಹಾನರನ್ನು ಹೇಗೆ ದಂಡಿಸಬೇಕೆಂಬುದನ್ನು ಅವರು ನಿರ್ಣಯಿಸಲಾರದೆ ಹೋದರು.</verse>
				<verse number="22">ಅದ್ಭುತ ರೀತಿಯಲ್ಲಿ ಸ್ವಸ್ಥತೆ ಹೊಂದಿದ ಆ ಮನುಷ್ಯನು ನಾಲ್ವತ್ತಕ್ಕಿಂತಲೂ ಹೆಚ್ಚು ವರ್ಷ ವಯಸ್ಸಿನವನಾಗಿದ್ದನು.</verse>
				<verse number="23">ಬಿಡುಗಡೆ ಹೊಂದಿದ, ಪೇತ್ರ ಮತ್ತು ಯೋಹಾನರು ವಿಶ್ವಾಸಿಗಳ ಬಳಿಗೆ ಹೋಗಿ, ತಮಗೆ ಮುಖ್ಯಯಾಜಕರೂ ಹಿರಿಯರೂ ಹೇಳಿದ್ದೆಲ್ಲವನ್ನೂ ವರದಿಮಾಡಿದರು.</verse>
				<verse number="24">ಇದನ್ನು ಕೇಳಿ ಅವರೆಲ್ಲರೂ ಒಟ್ಟಾಗಿ ಸ್ವರವೆತ್ತಿ ದೇವರಿಗೆ ಪ್ರಾರ್ಥನೆ ಮಾಡಿದರು: “ಕರ್ತದೇವರೇ, ನೀನು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿರುವಿರಿ.</verse>
				<verse number="25">ಪವಿತ್ರಾತ್ಮ ದೇವರ ಮೂಲಕ ನಿಮ್ಮ ಸೇವಕನೂ ನಮ್ಮ ಪಿತೃವೂ ಆದ ದಾವೀದನ ಮುಖಾಂತರ ನೀವು ಮಾತನಾಡಿ: “ ‘ರಾಷ್ಟ್ರಗಳು ರೋಷಗೊಳ್ಳುವುದೇಕೆ? ಜನರು ವ್ಯರ್ಥವಾಗಿ ಕಲ್ಪಿಸಿಕೊಂಡದ್ದೇಕೆ?</verse>
				<verse number="26">ಕರ್ತ ದೇವರಿಗೂ ಅವರ ಅಭಿಷಿಕ್ತನಿಗೂ ವಿರೋಧವಾಗಿ ಭೂಲೋಕದ ಅರಸರೂ ಅಧಿಪತಿಗಳೂ ಒಂದಾಗಿ ಕೂಡಿಕೊಳ್ಳುತ್ತಿರುವರು. ’</verse>
				<verse number="27">ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕ ಯೇಸುವಿನ ವಿರೋಧವಾಗಿ ದುರಾಲೋಚನೆ ಮಾಡಲು ಹೆರೋದನು ಮತ್ತು ಪೊಂತ್ಯ ಪಿಲಾತನು, ಯೆಹೂದ್ಯರಲ್ಲದವರೊಂದಿಗೂ ಇಸ್ರಾಯೇಲರೊಂದಿಗೂ ಈ ಪಟ್ಟಣದಲ್ಲೇ ಸೇರಿ ಬಂದಿದ್ದರು.</verse>
				<verse number="28">ನಿಮ್ಮ ಶಕ್ತಿಯೂ ಚಿತ್ತವೂ ಮುಂಚಿತವಾಗಿಯೇ ಏನಾಗಬೇಕೆಂದು ನಿರ್ಣಯಿಸಿದ್ದನ್ನೇ ಅವರು ಮಾಡಿದರು.</verse>
				<verse number="29">ಕರ್ತದೇವರೇ, ಈಗ ಅವರ ಬೆದರಿಕೆಯನ್ನು ನೋಡಿರಿ; ಬಹುಧೈರ್ಯದಿಂದ ನಿಮ್ಮ ವಾಕ್ಯವನ್ನು ಹೇಳಲು ನಿಮ್ಮ ಸೇವಕರನ್ನು ಬಲಪಡಿಸಿರಿ.</verse>
				<verse number="30">ನಿಮ್ಮ ಪವಿತ್ರ ಸೇವಕ ಯೇಸುವಿನ ನಾಮದ ಮೂಲಕವಾಗಿ ಗುಣಪಡಿಸಲು, ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಮಾಡಲು ದೇವರೇ, ನಿಮ್ಮ ಹಸ್ತವನ್ನು ಚಾಚಿರಿ.”</verse>
				<verse number="31">ಹೀಗೆ ಪ್ರಾರ್ಥನೆ ಮಾಡಿದ ತರುವಾಯ ಅವರು ನೆರೆದಿದ್ದ ಸ್ಥಳವು ಕಂಪನಗೊಂಡಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ಧೈರ್ಯದಿಂದ ದೇವರ ವಾಕ್ಯವನ್ನು ಸಾರತೊಡಗಿದರು.</verse>
				<verse number="32">ವಿಶ್ವಾಸಿಗಳೆಲ್ಲರ ಹೃದಯ ಹಾಗೂ ಮನಸ್ಸುಗಳು ಒಂದಾಗಿದ್ದವು. ಯಾವನೂ ತನ್ನ ಆಸ್ತಿಯನ್ನು ತನ್ನದೇ ಎಂದು ಹಕ್ಕು ಸಾಧಿಸಲಿಲ್ಲ. ಆದರೆ ಅವರೆಲ್ಲರೂ ತಮಗಿದ್ದ ಎಲ್ಲವನ್ನು ಹಂಚಿಕೊಂಡರು.</verse>
				<verse number="33">ಮಹಾಶಕ್ತಿಯಿಂದ ಅಪೊಸ್ತಲರು ಕರ್ತ ಯೇಸುವಿನ ಪುನರುತ್ಥಾನಕ್ಕೆ ಸಾಕ್ಷಿಕೊಟ್ಟರು. ಅವರೆಲ್ಲರ ಮೇಲೆ ದೇವರ ಮಹಾಕೃಪೆಯಿತ್ತು.</verse>
				<verse number="34">ಅವರಲ್ಲಿ ಕೊರತೆಯಿದ್ದವರು ಇರಲಿಲ್ಲ. ಏಕೆಂದರೆ ಹೊಲಗದ್ದೆಯಿದ್ದವರೂ ಮನೆಗಳಿದ್ದವರೆಲ್ಲರೂ ಅವುಗಳನ್ನು ಮಾರಿ ಹಣವನ್ನು ತಂದು,</verse>
				<verse number="35">ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು. ಅಪೊಸ್ತಲರು ಅದನ್ನು ಅಗತ್ಯವಿದ್ದವರಿಗೆ ತಕ್ಕಂತೆ ಹಂಚುತ್ತಿದ್ದರು.</verse>
				<verse number="36">ಸೈಪ್ರಸ್ ಎಂಬಲ್ಲಿ ಹುಟ್ಟಿದ ಒಬ್ಬ ಲೇವಿಯನು ಇದ್ದನು, ಅವನ ಹೆಸರು ಯೋಸೇಫ, ಅಪೊಸ್ತಲರು ಅವನನ್ನು “ಬಾರ್ನಬ” ಎಂದು ಕರೆದರು. ಬಾರ್ನಬ ಅಂದರೆ “ಆದರಣೆಯ ಪುತ್ರನು” ಎಂದು ಅರ್ಥ.</verse>
				<verse number="37">ಅವನು ತನ್ನ ಸ್ವಂತ ಹೊಲವನ್ನು ಮಾರಿ, ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.</verse>
			</chapter>
			<chapter number="5">
				<verse number="1">ಅನನೀಯ ಎಂಬ ಹೆಸರಿನ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಆಸ್ತಿಯ ಒಂದು ಭಾಗವನ್ನು ಮಾರಿದನು.</verse>
				<verse number="2">ತನ್ನ ಹೆಂಡತಿಯ ಪೂರ್ಣ ತಿಳುವಳಿಕೆಯಿಂದ, ಬಂದ ಹಣದಲ್ಲಿ ಒಂದು ಭಾಗವನ್ನು ತನಗಾಗಿ ಇಟ್ಟುಕೊಂಡು, ಉಳಿದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿಟ್ಟನು.</verse>
				<verse number="3">ಆದರೆ ಪೇತ್ರನು, “ಅನನೀಯಾ, ಪವಿತ್ರಾತ್ಮ ದೇವರಿಗೆ ಸುಳ್ಳು ಹೇಳುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿಸಿದ್ದು ಏಕೆ? ಆಸ್ತಿಯನ್ನು ಮಾರಿ ಬಂದ ಹಣದಲ್ಲಿ ಒಂದು ಭಾಗವನ್ನು ಇಟ್ಟುಕೊಂಡದ್ದೇಕೆ?</verse>
				<verse number="4">ಮಾರುವುದಕ್ಕಿಂತ ಮೊದಲು ಅದು ನಿನ್ನ ಅಧೀನದಲ್ಲಿತ್ತಲ್ಲವೇ? ಮಾರಿದ ನಂತರವೂ ಆ ಹಣ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ಇಂಥ ಕಾರ್ಯ ಮಾಡಲು ನಿನ್ನ ಹೃದಯದಲ್ಲಿ ಯೋಚನೆ ಬಂದದ್ದು ಏಕೆ? ನೀನು ಸುಳ್ಳು ಹೇಳಿದ್ದು ಮನುಷ್ಯರಿಗಲ್ಲ, ದೇವರಿಗೇ,” ಎಂದು ನುಡಿದನು.</verse>
				<verse number="5">ಇದನ್ನು ಅನನೀಯನು ಕೇಳಿಸಿಕೊಂಡಾಗ, ಕೆಳಗೆ ಬಿದ್ದು ಸತ್ತುಹೋದನು. ನಡೆದ ಸಂಗತಿಯನ್ನು ಕೇಳಿದವರೆಲ್ಲರಿಗೂ ಮಹಾ ಭಯವು ಉಂಟಾಯಿತು.</verse>
				<verse number="6">ಆಗ ಯುವಕರು ಬಂದು ಅವನ ಶವವನ್ನು ಬಟ್ಟೆಯಲ್ಲಿ ಸುತ್ತಿ, ಹೊತ್ತುಕೊಂಡು ಹೋಗಿ ಹೂಣಿಟ್ಟರು.</verse>
				<verse number="7">ಏನು ಸಂಭವಿಸಿತೆಂಬುದನ್ನು ತಿಳಿಯದೆ, ಸುಮಾರು ಮೂರು ತಾಸುಗಳ ನಂತರ ಅವನ ಹೆಂಡತಿ ಒಳಗೆ ಪ್ರವೇಶಿಸಿದಳು.</verse>
				<verse number="8">ಆಗ ಪೇತ್ರನು, “ನನಗೆ ಹೇಳು ನೀನು ಮತ್ತು ನಿನ್ನ ಗಂಡ ಅನನೀಯನು ಆಸ್ತಿಯನ್ನು ಮಾರಿದ್ದರಿಂದ ಬಂದ ಹಣ ಇಷ್ಟೆಯೋ?” ಎಂದು ಆಕೆಯನ್ನು ಕೇಳಲು, “ಹೌದು, ಅಷ್ಟೇ ಕ್ರಯ ಬಂದಿತು,” ಎಂದಳು.</verse>
				<verse number="9">“ನೀವಿಬ್ಬರೂ ಕರ್ತದೇವರ ಆತ್ಮವನ್ನು ಪರೀಕ್ಷಿಸಲು ಒಪ್ಪಿಕೊಂಡದ್ದೇಕೆ? ಇಗೋ! ನಿನ್ನ ಗಂಡನ ಶವವನ್ನು ಹೂಣಿಟ್ಟು ಬಂದವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದು ಆಕೆಗೆ ಪೇತ್ರನು ಹೇಳಿದನು.</verse>
				<verse number="10">ಆ ಕ್ಷಣದಲ್ಲಿಯೇ ಆಕೆ ಅವನ ಪಾದಗಳ ಬಳಿಯಲ್ಲಿ ಬಿದ್ದು ಸತ್ತುಹೋದಳು. ಆಗ ಯುವಕರು ಒಳಗೆ ಬಂದು ಆಕೆ ಸತ್ತು ಹೋಗಿರುವುದನ್ನು ಕಂಡು, ಆಕೆಯ ಶವವನ್ನು ಹೊತ್ತುಕೊಂಡು ಹೋಗಿ ಆಕೆಯ ಗಂಡನ ಪಕ್ಕದಲ್ಲಿಯೇ ಸಮಾಧಿಮಾಡಿದರು.</verse>
				<verse number="11">ಇಡೀ ಸಭೆಗೂ ಈ ಘಟನೆಗಳ ಬಗ್ಗೆ ಕೇಳಿದವರಿಗೂ ಮಹಾ ಭಯವು ಉಂಟಾಯಿತು.</verse>
				<verse number="12">ಜನರ ಮಧ್ಯದಲ್ಲಿ ಅಪೊಸ್ತಲರಿಂದ ಅನೇಕ ಸೂಚಕಕಾರ್ಯಗಳೂ ಅದ್ಭುತಕಾರ್ಯಗಳೂ ನಡೆದವು. ಅವರೆಲ್ಲರೂ ಒಂದೇ ಮನಸ್ಸುಳ್ಳವರಾಗಿ “ಸೊಲೊಮೋನನ ಮಂಟಪ” ಎಂದು ಕರೆಯಲಾಗುತ್ತಿದ್ದ ಸ್ಥಳದಲ್ಲಿ ಸೇರುತ್ತಿದ್ದರು.</verse>
				<verse number="13">ಅವರೆಲ್ಲರೂ ಜನರಿಂದ ಬಹಳ ಗೌರವಕ್ಕೆ ಪಾತ್ರರಾಗಿದ್ದರೂ ಬೇರೆಯವರು ಅವರ ಜೊತೆ ಸೇರಲು ಧೈರ್ಯಗೊಳ್ಳಲಿಲ್ಲ.</verse>
				<verse number="14">ಆದರೂ ಹೆಚ್ಚು ಜನ ಪುರುಷರೂ ಸ್ತ್ರೀಯರೂ ಕರ್ತ ದೇವರಲ್ಲಿ ವಿಶ್ವಾಸವನ್ನಿಟ್ಟು ಅವರ ಜೊತೆ ಸೇರಿಕೊಂಡರು. ಅವರು ವಿಶ್ವಾಸಿಗಳ ಸಂಖ್ಯೆಯಲ್ಲಿ ಸೇರಿದರು.</verse>
				<verse number="15">ಇದರ ಪರಿಣಾಮವಾಗಿ, ಪೇತ್ರನು ಬೀದಿಗಳಲ್ಲಿ ಹಾದುಹೋಗುತ್ತಿದ್ದಾಗ ಅವನ ನೆರಳು ಕೆಲವರ ಮೇಲಾದರೂ ಬೀಳಲೆಂದು ಜನರು ತಮ್ಮಲ್ಲಿ ಅಸ್ವಸ್ಥತೆಯಿದ್ದವರನ್ನು ಹಾಸಿಗೆ ಮತ್ತು ಡೋಲಿಗಳ ಸಮೇತ ತಂದು ಬೀದಿಗಳಲ್ಲಿ ಮಲಗಿಸುತ್ತಿದ್ದರು.</verse>
				<verse number="16">ಯೆರೂಸಲೇಮಿನ ಸುತ್ತಮುತ್ತಲಿನ ಊರುಗಳಿಂದ ಜನರ ಗುಂಪುಗಳು ತಮ್ಮಲ್ಲಿ ಅಸ್ವಸ್ಥರಾದವರನ್ನೂ ಅಶುದ್ಧಾತ್ಮ ಪೀಡಿತರನ್ನೂ ಕರೆದುಕೊಂಡು ಬರುತ್ತಿದ್ದರು. ಬಂದವರೆಲ್ಲರೂ ಸ್ವಸ್ಥರಾಗುತ್ತಿದ್ದರು.</verse>
				<verse number="17">ಹೀಗಿರಲು ಮಹಾಯಾಜಕನೂ ಅವನ ಬಳಿಯಲ್ಲಿದ್ದ ಸದ್ದುಕಾಯರೆಲ್ಲರೂ ಬಹಳ ಅಸೂಯೆಪಟ್ಟರು.</verse>
				<verse number="18">ಅವರು ಅಪೊಸ್ತಲರನ್ನು ಬಂಧಿಸಿ ಸಾರ್ವಜನಿಕ ಸೆರೆಮನೆಯಲ್ಲಿ ಹಾಕಿಸಿದರು.</verse>
				<verse number="19">ಆದರೆ ರಾತ್ರಿಯಲ್ಲಿ ಕರ್ತದೇವರ ದೂತನೊಬ್ಬನು ಸೆರೆಮೆನೆಯ ದ್ವಾರಗಳನ್ನು ತೆರೆದು ಅವರನ್ನು ಹೊರಗೆ ನಡೆಸಿಕೊಂಡು ಬಂದು,</verse>
				<verse number="20">“ಹೋಗಿರಿ, ದೇವಾಲಯದ ಅಂಗಳದಲ್ಲಿ ನಿಂತುಕೊಂಡು, ಈ ಜೀವವಾಕ್ಯಗಳನ್ನೆಲ್ಲಾ ಜನರಿಗೆ ಬೋಧಿಸಿರಿ,” ಎಂದು ಹೇಳಿದನು.</verse>
				<verse number="21">ಪ್ರಾತಃಕಾಲದಲ್ಲಿ ಅವರು ತಮಗೆ ಹೇಳಿದಂತೆಯೇ ದೇವಾಲಯವನ್ನು ಪ್ರವೇಶಿಸಿ ಜನರಿಗೆ ಬೋಧಿಸಲು ಪ್ರಾರಂಭಿಸಿದರು. ಮಹಾಯಾಜಕನು ಮತ್ತು ಅವನೊಂದಿಗಿದ್ದವರು ಕೂಡಿಬಂದಾಗ, ನ್ಯಾಯಸಭೆಯನ್ನೂ ಇಸ್ರಾಯೇಲರ ಹಿರಿಯರ ಪೂರ್ಣಮಂಡಳಿಯನ್ನೂ ಕೂಡಿಸಿ, ಸೆರೆಮನೆಯಿಂದ ಅಪೊಸ್ತಲರನ್ನು ಕರೆಕಳುಹಿಸಿದರು.</verse>
				<verse number="22">ಆದರೆ ಅಧಿಕಾರಿಗಳು ಸೆರೆಮನೆಗೆ ಬಂದಾಗ, ಅಪೊಸ್ತಲರು ಸೆರೆಮನೆಯಲ್ಲಿ ಇರಲಿಲ್ಲ. ಇವರು ಹಿಂತಿರುಗಿ ಹೋಗಿ,</verse>
				<verse number="23">“ಸೆರೆಮನೆಯ ಬಾಗಿಲುಗಳು ಭದ್ರಪಡಿಸಿರುವುದನ್ನೂ ದ್ವಾರಗಳ ಬಳಿ ಕಾವಲುಗಾರರು ನಿಂತಿರುವುದನ್ನೂ ಕಂಡೆವು. ಆದರೆ ದ್ವಾರಗಳನ್ನು ನಾವು ತೆರೆದಾಗ ಒಳಗೆ ಯಾರೂ ಇರಲಿಲ್ಲ,” ಎಂದು ವರದಿಮಾಡಿದರು.</verse>
				<verse number="24">ಈ ವರದಿಯನ್ನು ಕೇಳಿದಾಗ, ದೇವಾಲಯದ ಕಾವಲುಗಾರರ ದಳಪತಿಯೂ ಮುಖ್ಯಯಾಜಕರೂ ಇದರಿಂದ ಏನಾಗುವುದೋ ಎಂದು ಕಳವಳಪಟ್ಟರು.</verse>
				<verse number="25">ಆಗ ಯಾರೋ ಒಬ್ಬನು ಬಂದು, “ನೋಡಿರಿ! ನೀವು ಸೆರೆಮನೆಯಲ್ಲಿ ಬಂಧಿಸಿಟ್ಟಿದ್ದ ಆ ಪುರುಷರು ದೇವಾಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ,” ಎಂದು ವರದಿ ಮಾಡಿದನು.</verse>
				<verse number="26">ಆಗ ದಳಪತಿಯು ತನ್ನ ಅಧಿಕಾರಿಗಳೊಂದಿಗೆ ಹೋಗಿ ಅಪೊಸ್ತಲರನ್ನು ಕರೆದುಕೊಂಡು ಬಂದನು. ಜನರು ತಮಗೆ ಕಲ್ಲೆಸೆದಾರೆಂಬ ಭಯ ಅವರಿಗಿದ್ದುದರಿಂದ ಅಪೊಸ್ತಲರನ್ನು ಬಲವಂತಮಾಡದೆ ಕರೆದುಕೊಂಡು ಬಂದನು.</verse>
				<verse number="27">ಅಪೊಸ್ತಲರನ್ನು ಕರೆತಂದು, ಮಹಾಯಾಜಕನು ಪ್ರಶ್ನಿಸಲೆಂದು ಅವರನ್ನು ನ್ಯಾಯಸಭೆಯ ಎದುರಿನಲ್ಲಿ ನಿಲ್ಲಿಸಿದರು.</verse>
				<verse number="28">ಅವನು, “ಈ ಹೆಸರಿನಲ್ಲಿ ಉಪದೇಶ ಮಾಡಬಾರದೆಂದು ನಾವು ನಿಮಗೆ ಕಟ್ಟುನಿಟ್ಟಾಗಿ ಅಪ್ಪಣೆಕೊಟ್ಟೆವು. ಇಗೋ ನೀವಾದರೋ ನಿಮ್ಮ ಬೋಧನೆಯಿಂದ ಇಡೀ ಯೆರೂಸಲೇಮನ್ನು ತುಂಬಿಸಿರುವಿರಿ. ಅಲ್ಲದೆ ಈ ಮನುಷ್ಯನನ್ನು ಕೊಂದು ರಕ್ತ ಸುರಿಸಿದ ಅಪರಾಧಕ್ಕೆ ನಮ್ಮನ್ನು ನೀವು ಹೊಣೆಮಾಡಲು ಉದ್ದೇಶಿಸಿದ್ದೀರಿ,” ಎಂದು ಹೇಳಿದನು.</verse>
				<verse number="29">ಪೇತ್ರ ಮತ್ತು ಇತರ ಅಪೊಸ್ತಲರು ಉತ್ತರವಾಗಿ, “ನಾವು ಮನುಷ್ಯರಿಗೆ ವಿಧೇಯರಾಗಿರುವುದಕ್ಕಿಂತ ದೇವರಿಗೆ ವಿಧೇಯರಾಗಿರಬೇಕಲ್ಲ!</verse>
				<verse number="30">ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.</verse>
				<verse number="31">ಯೇಸು ಇಸ್ರಾಯೇಲಿಗೆ ಪಶ್ಚಾತ್ತಾಪವನ್ನೂ ಪಾಪಗಳ ಕ್ಷಮಾಪಣೆಯನ್ನೂ ಕೊಡಲು ಸಾಧ್ಯವಾಗುವಂತೆ ದೇವರು ಯೇಸುವನ್ನು ತಮ್ಮ ಬಲಗಡೆಯಲ್ಲಿ ಅಧಿಪತಿಯನ್ನಾಗಿಯೂ ರಕ್ಷಕನನ್ನಾಗಿಯೂ ಉನ್ನತಿಗೇರಿಸಿದ್ದಾರೆ.</verse>
				<verse number="32">ಈ ಸಂಗತಿಗಳಿಗೆ ನಾವೇ ಸಾಕ್ಷಿಗಳು; ತನಗೆ ವಿಧೇಯರಾಗಿರುವವರಿಗೆ ದೇವರು ದಯಪಾಲಿಸಿದ ಪವಿತ್ರಾತ್ಮ ದೇವರು ಸಾಕ್ಷಿ,” ಎಂದರು.</verse>
				<verse number="33">ಅವರು ಇದನ್ನು ಕೇಳಿದಾಗ ಬಹುಕೋಪಗೊಂಡು ಅವರನ್ನು ಕೊಲ್ಲಬೇಕೆಂದಿದ್ದರು.</verse>
				<verse number="34">ಆದರೆ ಗಮಲಿಯೇಲ್ ಎಂಬ ಹೆಸರಿನ ಒಬ್ಬ ಫರಿಸಾಯನಿದ್ದನು. ಅವನು ನಿಯಮ ಬೋಧಕನೂ ಎಲ್ಲಾ ಜನರ ಗೌರವಕ್ಕೆ ಪಾತ್ರನೂ ಆಗಿದ್ದನು. ಅವನು ನ್ಯಾಯಸಭೆಯಲ್ಲಿ ಎದ್ದು ನಿಂತುಕೊಂಡು, ಸ್ವಲ್ಪ ಸಮಯ ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಆಜ್ಞಾಪಿಸಿದನು.</verse>
				<verse number="35">ಗಮಲಿಯೇಲನು ಸಭೆಯನ್ನುದ್ದೇಶಿಸಿ, “ಇಸ್ರಾಯೇಲರೇ, ಈ ಜನರ ವಿರುದ್ಧ ಮಾಡಬೇಕೆಂದಿರುವುದರ ಬಗ್ಗೆ ಎಚ್ಚರಿಕೆಯುಳ್ಳವರಾಗಿರಿ.</verse>
				<verse number="36">ಕೆಲವು ದಿನಗಳ ಹಿಂದೆ ಥೈದನೆಂಬವನು ಕಾಣಿಸಿಕೊಂಡು, ತಾನು ಒಬ್ಬ ಗಣ್ಯವ್ಯಕ್ತಿಯೆಂದು ಹೇಳಿಕೊಳ್ಳುತ್ತಾ ಬಂದನು. ಸುಮಾರು ನಾಲ್ಕುನೂರು ಜನರು ಅವನ ಹಿಂಬಾಲಕರಾದರು. ಅವನು ಕೊಲೆಗೀಡಾದನು. ಅವನಿಗೆ ವಿಧೇಯರಾದವರೆಲ್ಲರೂ ಚದರಿಹೋಗಿ ಇಲ್ಲದಂತಾದರು.</verse>
				<verse number="37">ಅವನ ನಂತರ ಗಲಿಲಾಯದ ಯೂದ ಎಂಬುವವನು ಜನಗಣತಿಯ ದಿನಗಳಲ್ಲಿ ಕಾಣಿಸಿಕೊಂಡು, ಜನರ ಗುಂಪನ್ನು ತಿರುಗಿಬೀಳಲು ನಡೆಸಿದನು. ಅವನು ಸಹ ನಾಶವಾದನು. ಅವನನ್ನು ಹಿಂಬಾಲಿಸಿದವರೆಲ್ಲರೂ ಚದರಿಹೋದರು.</verse>
				<verse number="38">ಆದ್ದರಿಂದ, ಈಗ ನಾನು ನಿಮಗೆ ಹೇಳುವುದೇನೆಂದರೆ, ಈ ಜನರಿಂದ ದೂರವಾಗಿರಿ! ಅವರನ್ನು ಬಿಟ್ಟುಬಿಡಿರಿ! ಏಕೆಂದರೆ ಅವರ ಉದ್ದೇಶ ಅಥವಾ ಕಾರ್ಯವು ಮನುಷ್ಯರಿಂದ ಬಂದದ್ದಾಗಿದ್ದರೆ, ಅದೇ ವ್ಯರ್ಥವಾಗುವುದು.</verse>
				<verse number="39">ಒಂದು ವೇಳೆ ಇದು ದೇವರಿಂದ ಬಂದದ್ದಾಗಿದ್ದರೆ, ಅವರನ್ನು ನಿಲ್ಲಿಸಲು ನಿಮ್ಮಿಂದಾಗದು. ಹಾಗೆ ಮಾಡಲು ಪ್ರಯತ್ನಿಸಿದರೆ ನೀವು ದೇವರಿಗೆ ವಿರೋಧವಾಗಿ ಹೋರಾಡುವವರಾಗಿ ಕಂಡು ಬರುವಿರಿ,” ಎಂದು ಹೇಳಿದನು.</verse>
				<verse number="40">ಅವರು ಗಮಲಿಯೇಲನ ಸಲಹೆಯನ್ನು ಒಪ್ಪಿದರು. ಅವರು ಅಪೊಸ್ತಲರನ್ನು ಕರೆಯಿರಿ ಅವರನ್ನು ಛಡಿಗಳಿಂದ ಹೊಡೆಸಿ, ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಆಜ್ಞಾಪಿಸಿ ಬಿಡುಗಡೆ ಮಾಡಿದರು.</verse>
				<verse number="41">ಆದ್ದರಿಂದ ಯೇಸುವಿನ ನಾಮದ ನಿಮಿತ್ತ ಅವಮಾನಪಡಲು ತಾವು ಯೋಗ್ಯರಾದೆವಲ್ಲಾ ಎಂದು ಅಪೊಸ್ತಲರು ಸಂತೋಷಪಡುತ್ತಾ ನ್ಯಾಯಸಭೆಯಿಂದ ಹೊರಗೆ ಹೋದರು.</verse>
				<verse number="42">ದಿನದಿನವೂ ಅವರು ದೇವಾಲಯಗಳಲ್ಲಿ ಮತ್ತು ಮನೆಯಿಂದ ಮನೆಗೆ ಹೋಗಿ ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದನ್ನೂ ಬೋಧಿಸುವುದನ್ನೂ ನಿಲ್ಲಿಸಲೇ ಇಲ್ಲ.</verse>
			</chapter>
			<chapter number="6">
				<verse number="1">ಆ ದಿನಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚುತ್ತಲೇ ಇತ್ತು. ಅವರಲ್ಲಿ ಗ್ರೀಕ್ ಮಾತನಾಡುವ ಯೆಹೂದ್ಯರು, ಹೀಬ್ರೂ ಭಾಷೆ ಮಾತನಾಡುವ ಯೆಹೂದ್ಯರ ವಿರೋಧವಾಗಿ ಗೊಣಗುಟ್ಟುತ್ತಿದ್ದರು. ಏಕೆಂದರೆ, “ಅನುದಿನದ ಉಪಚಾರದಲ್ಲಿ ಅವರು ತಮ್ಮ ವಿಧವೆಯರನ್ನು ಅಲಕ್ಷ್ಯಮಾಡುತ್ತಿದ್ದಾರೆ,” ಎಂದರು.</verse>
				<verse number="2">ಆದ್ದರಿಂದ ಆ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯರನ್ನು ಸೇರಿಸಿ, “ನಾವು ದೇವರ ವಾಕ್ಯ ಬೋಧಿಸುವ ಸೇವೆಯನ್ನು ಕಡೆಗಣಿಸಿ, ಆಹಾರ ವಿತರಣೆಗಾಗಿ ಸಮಯ ಕಳೆಯುತ್ತಿರುವುದು ಸರಿಯಲ್ಲ.</verse>
				<verse number="3">ಸಹೋದರರೇ, ನಿಮ್ಮಲ್ಲಿ ಪವಿತ್ರಾತ್ಮಭರಿತರೂ ಜ್ಞಾನವಂತರೂ ಎಂದು ಸಾಕ್ಷಿ ಹೊಂದಿರುವ ಏಳು ಜನರನ್ನು ಆಯ್ಕೆ ಮಾಡಿರಿ. ನಾವು ಅವರನ್ನು ಈ ಕಾರ್ಯಕ್ಕಾಗಿ ನೇಮಿಸುವೆವು.</verse>
				<verse number="4">ನಾವಾದರೋ ಪ್ರಾರ್ಥನೆ ಮಾಡುವುದರಲ್ಲಿಯೂ ದೇವರ ವಾಕ್ಯ ಬೋಧಿಸುವುದರಲ್ಲಿಯೂ ನಿರತರಾಗಿರುವೆವು,” ಎಂದು ಹೇಳಿದರು.</verse>
				<verse number="5">ಈ ಮಾತು ಇಡೀ ಸಮೂಹಕ್ಕೆ ಮೆಚ್ಚುಗೆಯಾಯಿತು. ಅವರು ಪೂರ್ಣನಂಬಿಕೆಯುಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೆಫನನ್ನು ಆರಿಸಿಕೊಂಡರು; ಅಲ್ಲದೆ ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮಾರ್ಗ ಅನುಸರಿಸುತ್ತಿದ್ದ ಅಂತಿಯೋಕ್ಯದ ನಿಕೊಲಾಯನನ್ನು ಆಯ್ಕೆಮಾಡಿದರು.</verse>
				<verse number="6">ಇವರನ್ನು ಅಪೊಸ್ತಲರ ಮುಂದೆ ತಂದು ನಿಲ್ಲಿಸಿದರು. ಅವರು ಪ್ರಾರ್ಥನೆಮಾಡಿ ಅವರ ಮೇಲೆ ತಮ್ಮ ಹಸ್ತಗಳನ್ನಿಟ್ಟು ನೇಮಿಸಿದರು.</verse>
				<verse number="7">ದೇವರ ವಾಕ್ಯವು ಅಭಿವೃದ್ಧಿಯಾಗುತ್ತಾ ಬಂತು. ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು. ಯಾಜಕರಲ್ಲಿಯೂ ಅನೇಕ ಜನರು ನಂಬಿಕೆಗೆ ವಿಧೇಯರಾದರು.</verse>
				<verse number="8">ದೇವರ ಕೃಪೆಯಿಂದಲೂ ಶಕ್ತಿಯಿಂದಲೂ ತುಂಬಿದ್ದ ಸ್ತೆಫನನಿಂದ ಜನರಲ್ಲಿ ಮಹಾ ಅದ್ಭುತಗಳೂ ಸೂಚಕಕಾರ್ಯಗಳೂ ನಡೆದವು.</verse>
				<verse number="9">ಆದರೆ, “ಬಿಡುಗಡೆ ಹೊಂದಿದವರು” ಎಂಬ ಯೆಹೂದ್ಯ ಸಭಾಮಂದಿರಕ್ಕೆ ಸೇರಿದವರಿಂದ ವಿರೋಧ ಉಂಟಾಯಿತು. ಅವರು ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಮತ್ತು ಏಷ್ಯಾ ಪ್ರಾಂತಗಳಿಂದ ಬಂದ ಯೆಹೂದ್ಯರಾಗಿದ್ದರು. ಅವರು ಸ್ತೆಫನನೊಂದಿಗೆ ತರ್ಕಿಸುವುದಕ್ಕೆ ಪ್ರಾರಂಭಿಸಿದರು.</verse>
				<verse number="10">ಆದರೆ ಅವನು ಜ್ಞಾನದಿಂದಲೂ ಪವಿತ್ರಾತ್ಮ ದೇವರಿಂದಲೂ ಮಾತನಾಡಿದ್ದರಿಂದ ಅವರಿಗೆ ಅವನನ್ನು ಎದುರಿಸಲು ಸಾಧ್ಯವಾಗಲಿಲ್ಲ.</verse>
				<verse number="11">ಆಗ ಅವರು, “ಇವನು ಮೋಶೆಗೂ ದೇವರಿಗೂ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುವುದನ್ನು ನಾವು ಕೇಳಿದ್ದೇವೆ,” ಎಂದು ಕೆಲವರಿಗೆ ಲಂಚಕೊಟ್ಟು ಹೇಳುವಂತೆ ರಹಸ್ಯವಾಗಿ ಮನವೊಲಿಸಿದರು.</verse>
				<verse number="12">ಹೀಗೆ ಅವರು ಜನರನ್ನೂ ಹಿರಿಯರನ್ನೂ ನಿಯಮ ಬೋಧಕರನ್ನೂ ಪ್ರಚೋದಿಸಿ ಸ್ತೆಫನನನ್ನು ಬಂಧಿಸಿ ನ್ಯಾಯಸಭೆಯ ಮುಂದೆ ತಂದು ನಿಲ್ಲಿಸಿದರು.</verse>
				<verse number="13">ಸುಳ್ಳುಸಾಕ್ಷಿಗಳನ್ನು ಹಾಜರುಪಡಿಸಿ, “ಈ ಮನುಷ್ಯನು ಈ ಪವಿತ್ರಸ್ಥಳಕ್ಕೂ ಮೋಶೆಯ ನಿಯಮಕ್ಕೂ ವಿರೋಧವಾಗಿ ಮಾತನಾಡುತ್ತಲೇ ಇದ್ದಾನೆ.</verse>
				<verse number="14">ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿಬಿಡುತ್ತಾರೆಂದೂ ನಮಗೆ ಒಪ್ಪಿಸಿದ ಮೋಶೆಯ ಪದ್ಧತಿಗಳನ್ನು ಬದಲಾಯಿಸುತ್ತಾರೆಂದೂ ಇವನು ಹೇಳುವುದನ್ನು ನಾವು ಕೇಳಿದ್ದೇವೆ,” ಎಂದು ಅವನ ವಿರುದ್ಧ ಸಾಕ್ಷಿ ಹೇಳಿಸಿದರು.</verse>
				<verse number="15">ನ್ಯಾಯಸಭೆಯಲ್ಲಿ ಕುಳಿತುಕೊಂಡಿದ್ದವರೆಲ್ಲರೂ ಸ್ತೆಫನನ ಮುಖವನ್ನೇ ದಿಟ್ಟಿಸಿ ನೋಡುತ್ತಿದ್ದರು. ಅವನ ಮುಖವು ದೇವದೂತನ ಮುಖದಂತೆ ಕಾಣಿಸುತ್ತಿತ್ತು.</verse>
			</chapter>
			<chapter number="7">
				<verse number="1">ಆಗ ಮಹಾಯಾಜಕನು, “ಈ ಸಂಗತಿಗಳು ನಿಜವೋ?” ಎಂದು ಸ್ತೆಫನನನ್ನು ಪ್ರಶ್ನಿಸಿದನು.</verse>
				<verse number="2">ಅದಕ್ಕೆ ಸ್ತೆಫನನು, “ಸಹೋದರರೇ, ತಂದೆಗಳೇ, ನನ್ನ ಮಾತಿಗೆ ಕಿವಿಗೊಡಿರಿ! ನಮ್ಮ ಪಿತೃ ಅಬ್ರಹಾಮನು ಹಾರಾನಿನಲ್ಲಿ ವಾಸಿಸುವುದಕ್ಕಿಂತ ಮೊದಲು ಮೆಸೊಪೊಟೇಮಿಯಾದಲ್ಲಿ ಇದ್ದನು. ಆಗ ಮಹಿಮೆಯ ದೇವರು ಅವನಿಗೆ ದರ್ಶನ ಕೊಟ್ಟು,</verse>
				<verse number="3">‘ನಿನ್ನ ಸ್ವದೇಶವನ್ನು ಬಂಧುಗಳನ್ನು ಬಿಟ್ಟು, ನಾನು ನಿನಗೆ ತೋರಿಸುವ ನಾಡಿಗೆ ಹೋಗು,’ ಎಂದು ಹೇಳಿದರು.</verse>
				<verse number="4">“ಅದರಂತೆ ಅಬ್ರಹಾಮನು ಕಸ್ದೀಯರ ನಾಡನ್ನು ಬಿಟ್ಟು ಹಾರಾನಿನಲ್ಲಿ ಬಂದು ನೆಲೆಸಿದನು. ಅವನ ತಂದೆಯ ಮರಣದ ನಂತರ ನೀವು ಈಗ ವಾಸಿಸುತ್ತಿರುವ ಈ ನಾಡಿಗೆ ದೇವರು ಅವನನ್ನು ಬರಮಾಡಿದರು.</verse>
				<verse number="5">ದೇವರು ಅವನಿಗೆ ಇಲ್ಲಿ ಕಾಲಿಡುವಷ್ಟು ಸ್ಥಳವನ್ನಾಗಲಿ, ಯಾವುದೇ ಬಾಧ್ಯಸ್ತಿಕೆಯನ್ನಾಗಲಿ ಕೊಡಲಿಲ್ಲ. ಆದರೆ ಅಬ್ರಹಾಮನಿಗೆ ಆ ಸಮಯದಲ್ಲಿ ಮಕ್ಕಳಿಲ್ಲದಿದ್ದರೂ ಅವನೂ ಅವನ ನಂತರ ಅವನ ಸಂತತಿಯವರೂ ದೇಶವನ್ನು ಹೊಂದುವರೆಂದು ದೇವರು ಅವನಿಗೆ ವಾಗ್ದಾನ ಮಾಡಿದರು.</verse>
				<verse number="6">ಇದಲ್ಲದೆ ದೇವರು ಅಬ್ರಹಾಮನೊಂದಿಗೆ ಮಾತನಾಡಿ, ‘ನಿನ್ನ ಸಂತತಿಯವರು ತಮ್ಮದಲ್ಲದ ದೇಶದಲ್ಲಿ ಪ್ರವಾಸಿಗಳಾಗಿರುವರು. ಅವರು ಗುಲಾಮರಾಗಿ ನಾಲ್ಕುನೂರು ವರ್ಷಗಳವರೆಗೆ ದಬ್ಬಾಳಿಕೆಗೆ ಗುರಿಯಾಗುವರು.</verse>
				<verse number="7">ಆದರೆ ಅವರು ಗುಲಾಮರಾಗಿ ಸೇವೆ ಸಲ್ಲಿಸುತ್ತಿದ್ದ ದೇಶಕ್ಕೆ ನಾನು ನ್ಯಾಯತೀರಿಸುವೆನು. ಅನಂತರ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು,’ ಎಂದು ದೇವರು ಹೇಳಿದರು.</verse>
				<verse number="8">ಆಮೇಲೆ ದೇವರು ಅಬ್ರಹಾಮನಿಗೆ ಸುನ್ನತಿಯ ಒಡಂಬಡಿಕೆಯನ್ನೂ ಕೊಟ್ಟರು. ಅಬ್ರಹಾಮನಿಗೆ ಇಸಾಕನು ಜನಿಸಿದನು. ಇಸಾಕನು ಜನಿಸಿದ ಎಂಟನೆಯ ದಿನ ಅಬ್ರಹಾಮನು ಇಸಾಕನಿಗೆ ಸುನ್ನತಿ ಮಾಡಿಸಿದನು. ಅನಂತರ ಇಸಾಕನಿಗೆ ಯಾಕೋಬನು ಜನಿಸಿದನು. ಯಾಕೋಬನು ನಮ್ಮ ಹನ್ನೆರಡು ಮಂದಿ ಪಿತೃಗಳಿಗೆ ತಂದೆಯಾದನು.</verse>
				<verse number="9">“ಈ ಪಿತೃಗಳು ಯೋಸೇಫನ ಮೇಲೆ ಮತ್ಸರ ತಾಳಿ ಅವನನ್ನು ಈಜಿಪ್ಟಿನವರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಅವನೊಂದಿಗಿದ್ದು,</verse>
				<verse number="10">ಅವನನ್ನು ಎಲ್ಲಾ ಸಂಕಟಗಳಿಂದ ಬಿಡಿಸಿದರು. ದೇವರು ಯೋಸೇಫನಿಗೆ ಜ್ಞಾನವನ್ನು ಕೊಟ್ಟು ಈಜಿಪ್ಟಿನ ಅರಸನಾದ ಫರೋಹನ ಮೆಚ್ಚುಗೆಗೆ ಪಾತ್ರನಾಗುವಂತೆ ಮಾಡಿದರು. ಹೀಗೆ ಯೋಸೇಫನನ್ನು ಈಜಿಪ್ಟ್ ದೇಶದ ಮೇಲೆಯೂ ತನ್ನ ಅರಮನೆಯ ಮೇಲೆಯೂ ಅಧಿಕಾರಿಯನ್ನಾಗಿ ಫರೋಹನು ನೇಮಿಸಿದನು.</verse>
				<verse number="11">“ಆ ಕಾಲದಲ್ಲಿ ಈಜಿಪ್ಟ್ ಮತ್ತು ಕಾನಾನ್ ದೇಶಗಳ ಎಲ್ಲಾ ಕಡೆಗಳಲ್ಲಿಯೂ ಕ್ಷಾಮ ಬಂದು ಜನರು ಬಹಳ ಬಾಧೆಪಟ್ಟರು, ನಮ್ಮ ಪಿತೃಗಳಿಗೆ ಆಹಾರ ದೊರೆಯದೇ ಹೋಯಿತು.</verse>
				<verse number="12">ಈಜಿಪ್ಟಿನಲ್ಲಿ ದವಸಧಾನ್ಯ ದೊರೆಯುವುದೆಂದು ಯಾಕೋಬನಿಗೆ ತಿಳಿದುಬಂದಾಗ, ಅವನು ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು.</verse>
				<verse number="13">ಅವರು ಎರಡನೆಯ ಸಾರಿ ಅಲ್ಲಿಗೆ ಹೋದಾಗ, ಯೋಸೇಫನು ತಾನು ಯಾರೆಂಬುದನ್ನು ತನ್ನ ಸಹೋದರರಿಗೆ ತಿಳಿಸಿದನು. ಆಗ ಯೋಸೇಫನ ಕುಟುಂಬದ ಬಗ್ಗೆ ಫರೋಹನಿಗೆ ಗೊತ್ತಾಯಿತು.</verse>
				<verse number="14">ಇದಾದನಂತರ, ಯೋಸೇಫನು ತನ್ನ ತಂದೆ ಯಾಕೋಬನನ್ನು ಅವನ ಕುಟುಂಬದವರೆಲ್ಲರನ್ನೂ, ಒಟ್ಟು ಎಪ್ಪತ್ತೈದು ಜನರನ್ನು ಕರೆಕಳುಹಿಸಿದನು.</verse>
				<verse number="15">ಆಗ ಯಾಕೋಬನು ಈಜಿಪ್ಟಿಗೆ ಹೋದನು, ಅಲ್ಲಿಯೇ ಅವನೂ ನಮ್ಮ ಪಿತೃಗಳೂ ಮೃತರಾದರು.</verse>
				<verse number="16">ಅವರ ಮೃತಶರೀರವನ್ನು ಶೇಕೆಮಿಗೆ ತಂದರು. ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಕ್ರಯಕೊಟ್ಟು ಕೊಂಡುಕೊಂಡಿದ್ದ ಸಮಾಧಿಯಲ್ಲಿ ಇಟ್ಟರು.</verse>
				<verse number="17">“ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನ ನೆರವೇರುವ ಕಾಲವು ಹತ್ತಿರ ಬಂದಾಗ, ಈಜಿಪ್ಟಿನಲ್ಲಿ ನಮ್ಮ ಜನರ ಸಂಖ್ಯೆ ಬಹಳ ಹೆಚ್ಚಾಯಿತು.</verse>
				<verse number="18">ಆಗ, ‘ಯೋಸೇಫನನ್ನೇ ಅರಿಯದ ಬೇರೊಬ್ಬ ಅರಸನು, ಈಜಿಪ್ಟಿನಲ್ಲಿ ಅಧಿಕಾರಕ್ಕೆ ಬಂದನು.’</verse>
				<verse number="19">ಆ ಅರಸನು ನಮ್ಮ ಜನರೊಂದಿಗೆ ಕುಯುಕ್ತಿಯಿಂದ ವರ್ತಿಸುತ್ತಾ, ಅವರ ಕೂಸುಗಳು ಸಾಯುವಂತೆ ಬಿಸಾಡಿಬಿಡಬೇಕೆಂದು, ನಮ್ಮ ಪಿತೃಗಳನ್ನು ಕಠಿಣವಾಗಿ ಹಿಂಸಿಸಿದನು.</verse>
				<verse number="20">“ಆ ಸಮಯದಲ್ಲಿಯೇ ಮೋಶೆ ಜನಿಸಿದನು. ಅವನು ದೇವರ ದೃಷ್ಟಿಯಲ್ಲಿ ಸುಂದರನಾಗಿದ್ದನು. ಮೂರು ತಿಂಗಳುಗಳ ಕಾಲ ಅವನು ತನ್ನ ತಂದೆಯ ಮನೆಯಲ್ಲೇ ಬೆಳೆದನು.</verse>
				<verse number="21">ಆಮೇಲೆ ಅವನನ್ನು ಮನೆಯಿಂದ ಹೊರಗೆ ಹಾಕಿದಾಗ, ಫರೋಹನ ಮಗಳು ಅವನನ್ನು ತೆಗೆದುಕೊಂಡು ತನ್ನ ಸ್ವಂತ ಮಗನಂತೆ ಬೆಳೆಸಿದಳು.</verse>
				<verse number="22">ಮೋಶೆಯು ಈಜಿಪ್ಟಿನವರ ಸಕಲ ವಿದ್ಯೆಗಳಲ್ಲಿ ತರಬೇತಿ ಹೊಂದಿ, ಮಾತಿನಲ್ಲಿಯೂ ಕೃತ್ಯದಲ್ಲಿಯೂ ಸಮರ್ಥನಾದನು.</verse>
				<verse number="23">“ಮೋಶೆ ನಲವತ್ತು ವರ್ಷ ವಯಸ್ಸಾಗಿದ್ದಾಗ, ತನ್ನ ಬಂಧುಗಳಾದ ಇಸ್ರಾಯೇಲ್ ಪುತ್ರರನ್ನು ಸಂದರ್ಶಿಸಬೇಕೆಂದು ತೀರ್ಮಾನಿಸಿದನು.</verse>
				<verse number="24">ತನ್ನ ಬಂಧುಗಳಲ್ಲಿ ಒಬ್ಬನನ್ನು ಈಜಿಪ್ಟಿನವನೊಬ್ಬನು ಹೊಡೆಯುತ್ತಿರುವುದನ್ನು ಕಂಡು, ಮೋಶೆ ಆ ಈಜಿಪ್ಟಿನವನನ್ನು ಕೊಂದುಹಾಕಿ ಸೇಡು ತೀರಿಸಿದನು.</verse>
				<verse number="25">ದೇವರು ಸ್ವಜನರಿಗೆ ತನ್ನ ಮೂಲಕವಾಗಿ ಬಿಡುಗಡೆಯನ್ನು ಕೊಡುವನೆಂದು ಅವರು ಅರ್ಥ ಮಾಡಿಕೊಳ್ಳುವರೆಂದು ಮೋಶೆ ಭಾವಿಸಿದ್ದನು. ಸ್ವಜನರೋ, ಇದನ್ನು ಅರ್ಥಮಾಡಿಕೊಳ್ಳಲಿಲ್ಲ.</verse>
				<verse number="26">ಮರುದಿನ ಇಬ್ಬರು ಇಸ್ರಾಯೇಲರು ಜಗಳವಾಡುತ್ತಿರುವುದನ್ನು ಮೋಶೆ ಕಂಡು, ‘ಗೆಳೆಯರೇ, ನೀವು ಸಹೋದರರಲ್ಲವೇ; ಒಬ್ಬರಿಗೊಬ್ಬರು ಏಕೆ ಜಗಳಮಾಡುತ್ತಿದ್ದೀರಿ?’ ಎಂದು ಹೇಳಿ ಅವರನ್ನು ಸಮಾಧಾನಪಡಿಸಲು ಯತ್ನಿಸಿದನು.</verse>
				<verse number="27">“ಆದರೆ ಹೊಡೆಯುತ್ತಿದ್ದವನು ಮೋಶೆಯನ್ನು ಹಿಂದಕ್ಕೆ ತಳ್ಳಿ, ‘ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧೀಶನನ್ನಾಗಿಯೂ ನೇಮಿಸಿದವರು ಯಾರು?</verse>
				<verse number="28">ನಿನ್ನೆ ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಲ್ಲಬೇಕೆಂದಿರುವೆಯಾ?’ ಎಂದು ಕೇಳಿದನು.</verse>
				<verse number="29">ಮೋಶೆ ಇದನ್ನು ಕೇಳಿ, ಮಿದ್ಯಾನಿಗೆ ಓಡಿಹೋದನು. ಅಲ್ಲಿ ಪರದೇಶದವನಂತೆ ಬದುಕಿ, ಇಬ್ಬರು ಗಂಡು ಮಕ್ಕಳನ್ನು ಪಡೆದನು.</verse>
				<verse number="30">“ನಲವತ್ತು ವರ್ಷಗಳು ಗತಿಸಿದ ತರುವಾಯ ಸೀನಾಯಿ ಪರ್ವತದ ಮರುಭೂಮಿಯಲ್ಲಿ ಉರಿಯುವ ಪೊದೆಯಲ್ಲಿ ದೇವದೂತನೊಬ್ಬನು ಮೋಶೆಗೆ ದರ್ಶನ ಕೊಟ್ಟನು.</verse>
				<verse number="31">ಇದನ್ನು ಮೋಶೆ ಕಂಡಾಗ ಆ ನೋಟಕ್ಕೆ ಅತ್ಯಾಶ್ಚರ್ಯಪಟ್ಟನು. ಅದನ್ನು ಸಮೀಪದಿಂದ ನೋಡಲು ಹೊರಟಾಗ, ಕರ್ತದೇವರ ಧ್ವನಿಯನ್ನು ಅವನು ಕೇಳಿಸಿಕೊಂಡನು.</verse>
				<verse number="32">‘ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ, ಇಸಾಕನ, ಯಾಕೋಬನ ದೇವರು,’ ಎಂಬ ವಾಣಿಯನ್ನು ಕೇಳಿಸಿಕೊಂಡ ಮೋಶೆ ಭಯದಿಂದ ನಡುಗುತ್ತಾ ನೇರವಾಗಿ ದೃಷ್ಟಿಸಲು ಧೈರ್ಯಗೊಳ್ಳಲಿಲ್ಲ.</verse>
				<verse number="33">“ಆಗ ಕರ್ತದೇವರು ಅವನಿಗೆ, ‘ನಿನ್ನ ಪಾದರಕ್ಷೆಗಳನ್ನು ತೆಗೆದಿಡು. ನೀನು ನಿಂತಿರುವ ಸ್ಥಳ ಪರಿಶುದ್ಧ ಭೂಮಿ.</verse>
				<verse number="34">ಈಜಿಪ್ಟಿನಲ್ಲಿ ನನ್ನ ಜನರ ದುರವಸ್ಥೆಯನ್ನು ನಾನು ಕಂಡಿದ್ದೇನೆ. ಅವರ ನರಳಾಟವನ್ನು ಕೇಳಿಸಿಕೊಂಡಿದ್ದೇನೆ. ಅವರನ್ನು ಬಿಡುಗಡೆ ಮಾಡಲು ನಾನಿಳಿದು ಬಂದಿದ್ದೇನೆ. ಇಲ್ಲಿ ಬಾ, ನಾನು ನಿನ್ನನ್ನು ಹಿಂದಿರುಗಿ ಈಜಿಪ್ಟಿಗೆ ಕಳುಹಿಸುತ್ತೇನೆ,’ ಎಂದರು.</verse>
				<verse number="35">“ ‘ನಿನ್ನನ್ನು ಅಧಿಕಾರಿಯನ್ನಾಗಿಯೂ ನ್ಯಾಯಾಧೀಶನನ್ನಾಗಿಯೂ ನೇಮಿಸಿದವರು ಯಾರು?’ ಎಂಬ ಮಾತುಗಳಿಂದ ಇಸ್ರಾಯೇಲರು ತಿರಸ್ಕರಿಸಿದಂಥ ಆ ಮೋಶೆಯೇ ಇವನು. ಉರಿಯುವ ಪೊದೆಯಲ್ಲಿ ದರ್ಶನ ಕೊಟ್ಟು ದೇವದೂತನ ಮುಖಾಂತರವಾಗಿ ದೇವರೇ ಇವನನ್ನು ಅವರ ಅಧಿಕಾರಿಯನ್ನಾಗಿಯೂ ವಿಮೋಚಕನ್ನಾಗಿಯೂ ಕಳುಹಿಸಿದರು.</verse>
				<verse number="36">ಈ ಮೋಶೆಯೇ ಇಸ್ರಾಯೇಲರನ್ನು ಈಜಿಪ್ಟಿನಿಂದ ಹೊರಗೆ ನಡೆಸಿಕೊಂಡು ಬಂದನು. ಈಜಿಪ್ಟಿನಲ್ಲಿ, ಕೆಂಪುಸಮುದ್ರದ ಬಳಿಯಲ್ಲಿ, ಅರಣ್ಯದಲ್ಲಿ ಅದ್ಭುತಗಳನ್ನು ಮತ್ತು ಸೂಚಕಕಾರ್ಯಗಳನ್ನು ಮಾಡುತ್ತಾ ನಲವತ್ತು ವರ್ಷಗಳ ಕಾಲ ನಡೆಸಿದನು.</verse>
				<verse number="37">“ ‘ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ಸ್ವಂತ ಜನರೊಳಗಿಂದಲೇ ದೇವರು ನಿಮಗೆ ಕಳುಹಿಸುವರು,’ ಎಂದು ಇಸ್ರಾಯೇಲರಿಗೆ ಹೇಳಿದವನು ಈ ಮೋಶೆಯೇ.</verse>
				<verse number="38">ಇವನು ಇಸ್ರಾಯೇಲರು ಅರಣ್ಯದಲ್ಲಿ ದೊಡ್ಡಗುಂಪಾಗಿದ್ದಾಗ ಅವರ ಮಧ್ಯದಲ್ಲಿದ್ದವನು. ಸೀನಾಯಿ ಬೆಟ್ಟದ ಮೇಲೆ ಅವನೊಂದಿಗೆ ಮಾತನಾಡಿದ ದೇವದೂತನೊಂದಿಗಿದ್ದವನು. ಇವನು ನಮ್ಮ ಪಿತೃಗಳೊಂದಿಗೂ ಮಧ್ಯಸ್ಥನಾಗಿ ಇದ್ದವನು. ನಮಗೆ ಕೊಡುವುದಕ್ಕಾಗಿ ಜೀವ ವಾಕ್ಯಗಳನ್ನು ಸ್ವೀಕರಿಸಿದವನು ಈ ಮೋಶೆಯೇ.</verse>
				<verse number="39">“ಆದರೆ ನಮ್ಮ ಪಿತೃಗಳು ಅವನಿಗೆ ವಿಧೇಯರಾಗಲು ಒಪ್ಪಿಕೊಳ್ಳಲಿಲ್ಲ. ಅದಕ್ಕೆ ಬದಲಾಗಿ ಅವರು ಅವನನ್ನು ತಿರಸ್ಕರಿಸಿ, ತಮ್ಮ ಹೃದಯಗಳಲ್ಲಿ ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗಬೇಕೆಂದಿದ್ದರು.</verse>
				<verse number="40">ಅವರು ಆರೋನನಿಗೆ, ‘ನಮಗೆ ಮುಂದಾಗಿ ಹೋಗುವುದಕ್ಕಾಗಿ ನಮಗೆ ದೇವರುಗಳನ್ನು ಮಾಡಿಕೊಡು, ನಮ್ಮನ್ನು ಈಜಿಪ್ಟ್ ದೇಶದಿಂದ ಹೊರಗೆ ಕರೆದುಕೊಂಡು ಬಂದ ಆ ಮೋಶೆಗೆ ಏನಾಯಿತೋ ತಿಳಿಯದು,’ ಎಂದರು.</verse>
				<verse number="41">ಆ ಸಮಯದಲ್ಲಿ ಅವರು ಕರುವಿನ ರೂಪದಲ್ಲಿ ಒಂದು ವಿಗ್ರಹ ಮಾಡಿಕೊಂಡರು. ಅದರ ಮುಂದೆ ತಮ್ಮ ಬಲಿಯನ್ನು ಕೊಟ್ಟು, ತಮ್ಮ ಕೈಕೃತಿಗಳಲ್ಲಿ ಹರ್ಷಗೊಂಡರು.</verse>
				<verse number="42">ಆದರೆ ದೇವರು ಅವರಿಗೆ ವಿಮುಖನಾಗಿ, ಆಕಾಶದ ಗ್ರಹಗಳನ್ನೇ ಆರಾಧಿಸುವಂತೆ ಅವರನ್ನು ಬಿಟ್ಟುಬಿಟ್ಟರು. ಇದರ ವಿಷಯವಾಗಿ ಪ್ರವಾದಿಗಳ ಗ್ರಂಥದಲ್ಲಿ: “ ‘ಇಸ್ರಾಯೇಲಿನ ಮನೆತನದವರೇ, ನಲವತ್ತು ವರ್ಷ ಅರಣ್ಯದಲ್ಲಿ ಯಜ್ಞಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಿದ್ದು ನನಗಲ್ಲ.</verse>
				<verse number="43">ಮೊಲೋಖನ ಗುಡಾರವನ್ನೂ ರೊಂಫಾ ದೇವತೆಯ ನಕ್ಷತ್ರವನ್ನೂ ನೀವು ನಿರ್ಮಿಸಿಕೊಂಡ ವಿಗ್ರಹಗಳನ್ನೂ ಪೂಜಿಸಿದಿರಿ. ಆದ್ದರಿಂದ ಬಾಬಿಲೋನಿನ ಆಚೆ ನಿಮ್ಮನ್ನು ಸೆರೆಯಾಳುಗಳಾಗಿ ಕಳುಹಿಸುವೆ,’ ಎಂದು ಬರೆದಿರುವ ಪ್ರಕಾರ ಇದು ನೆರವೇರಿತು.</verse>
				<verse number="44">“ಅರಣ್ಯದಲ್ಲಿ ದೇವದರ್ಶನ ಗುಡಾರ ನಮ್ಮ ಪಿತೃಗಳ ಬಳಿಯಲ್ಲಿ ಇತ್ತು. ದೇವರು ಮೋಶೆಗೆ ಆಜ್ಞಾಪಿಸಿದಂತೆ, ಅವನಿಗೆ ತೋರಿಸಿದ ಮಾದರಿಯಂತೆ ಅದನ್ನು ರೂಪಿಸಲಾಗಿತ್ತು.</verse>
				<verse number="45">ನಮ್ಮ ಪಿತೃಗಳು ದೇವದರ್ಶನ ಗುಡಾರವನ್ನು ಪಡೆದುಕೊಂಡು, ಯೆಹೋಶುವನ ನಾಯಕತ್ವದ ಕೆಳಗೆ ದೇವರು ಅವರೆದುರಿನಲ್ಲಿ ಹೊರದೊಬ್ಬಿದ ದೇಶಗಳ ನಾಡನ್ನು ವಶಪಡಿಸಿಕೊಂಡಾಗ ಅದನ್ನು ತಮ್ಮೊಂದಿಗೆ ತೆಗೆದುಕೊಂಡು ಬಂದರು. ದಾವೀದನ ಕಾಲದವರೆಗೂ ಆ ಗುಡಾರವು ಅಲ್ಲಿಯೇ ಇತ್ತು.</verse>
				<verse number="46">ದಾವೀದನು ದೇವರ ದಯೆಯನ್ನು ಹೊಂದಿದವನಾಗಿ ಯಾಕೋಬನ ದೇವರಿಗೆ ದೇವಾಲಯ ಕಟ್ಟಲು ತನಗೆ ಅಪ್ಪಣೆಯಾಗಬೇಕೆಂದು ದೇವರಿಗೆ ಕೇಳಿಕೊಂಡನು.</verse>
				<verse number="47">ಆದರೆ ದೇವರಿಗಾಗಿ ಆಲಯವನ್ನು ಕಟ್ಟಿಸಿದವನು ಸೊಲೊಮೋನನು.</verse>
				<verse number="48">“ಹೀಗಿದ್ದರೂ ಮಹೋನ್ನತ ದೇವರು ಮಾನವರು ನಿರ್ಮಿಸಿದ ಆಲಯಗಳಲ್ಲಿ ವಾಸಮಾಡುವುದಿಲ್ಲ. ಪ್ರವಾದಿಯು ಹೇಳಿದಂತೆ:</verse>
				<verse number="49">“ ‘ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ. ನೀವು ನನಗಾಗಿ ಎಂಥಾ ಆಲಯವನ್ನು ಕಟ್ಟುವಿರಿ? ಎಲ್ಲಿ ನನ್ನ ವಿಶ್ರಾಂತಿಯ ಸ್ಥಳ?</verse>
				<verse number="50">ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯಿಂದ ಅಲ್ಲವೇ?’ ಎಂದು ಕರ್ತದೇವರು ಪ್ರಶ್ನಿಸುತ್ತಾರೆ.</verse>
				<verse number="51">“ಹಟಮಾರಿಗಳೇ! ಹೃದಯದಲ್ಲಿಯೂ ಕಿವಿಯಲ್ಲಿಯೂ ಸುನ್ನತಿ ಹೊಂದದವರೇ, ನೀವು ಸಹ ನಿಮ್ಮ ಪಿತೃಗಳಂತೆಯೇ ಯಾವಾಗಲೂ ಪವಿತ್ರಾತ್ಮ ದೇವರನ್ನು ಎದುರಿಸುತ್ತೀರಿ!</verse>
				<verse number="52">ನಿಮ್ಮ ಪಿತೃಗಳು ಹಿಂಸೆಪಡಿಸದೆ ಇದ್ದ ಪ್ರವಾದಿ ಒಬ್ಬನಾದರೂ ಇರುವನೇ? ನೀತಿವಂತರಾಗಿರುವ ಒಬ್ಬರು ಬರಲಿದ್ದಾರೆಂದು ಮುಂತಿಳಿಸಿದವರನ್ನು ಸಹ ಅವರು ಕೊಂದುಹಾಕಿದರು. ಈಗ ನೀವೇ ಅವರನ್ನು ಹಿಡಿದುಕೊಟ್ಟು ಕೊಲೆಮಾಡಿದ್ದೀರಿ.</verse>
				<verse number="53">ದೇವದೂತರ ಮುಖಾಂತರವಾಗಿ ಜಾರಿಗೆ ಬಂದ ಮೋಶೆಯ ನಿಯಮವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸುವುದಿಲ್ಲ,” ಎಂದು ಹೇಳಿದನು.</verse>
				<verse number="54">ಈ ಮಾತುಗಳನ್ನು ಕೇಳಿದಾಗ ಅವರು ರೋಷವುಳ್ಳವರಾಗಿ, ಅವನ ಕಡೆಗೆ ನೋಡಿ, ತಮ್ಮ ಹಲ್ಲುಗಳನ್ನು ಕಡಿದರು.</verse>
				<verse number="55">ಆದರೆ ಪವಿತ್ರಾತ್ಮಭರಿತನಾದ ಸ್ತೆಫನನು ಪರಲೋಕದ ಕಡೆಗೆ ನೋಡಿ, ದೇವರ ಮಹಿಮೆಯನ್ನೂ ದೇವರ ಬಲಗಡೆಯಲ್ಲಿ ಯೇಸು ನಿಂತುಕೊಂಡಿರುವುದನ್ನೂ ಕಂಡನು.</verse>
				<verse number="56">“ನೋಡಿರಿ, ಪರಲೋಕ ತೆರೆದಿರುವುದನ್ನೂ ಮನುಷ್ಯಪುತ್ರ ಆಗಿರುವ ಕ್ರಿಸ್ತ ಯೇಸು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ಕಾಣುತ್ತಿದ್ದೇನೆ,” ಎಂದನು.</verse>
				<verse number="57">ಈ ಮಾತಿಗೆ ಅವರು ತಮ್ಮ ಕಿವಿಗಳನ್ನು ಮುಚ್ಚಿಕೊಂಡು, ಆರ್ಭಟಿಸುತ್ತಾ, ಅವನ ಕಡೆಗೆ ಓಡಿಹೋಗಿ ಅವನನ್ನು ಹೊಡೆದರು.</verse>
				<verse number="58">ಅವನನ್ನು ಪಟ್ಟಣದ ಹೊರಗೆ ಎಳೆದುಕೊಂಡು ಹೋಗಿ ಅವನ ಮೇಲೆ ಕಲ್ಲೆಸೆಯಲು ಪ್ರಾರಂಭಿಸಿದರು. ಆ ಸಮಯದಲ್ಲಿ ಸಾಕ್ಷಿಗಳು ತಮ್ಮ ಬಟ್ಟೆಗಳನ್ನು ಸೌಲ ಎಂಬ ಹೆಸರಿನ ಒಬ್ಬ ಯುವಕನ ಪಾದಗಳ ಬಳಿಯಲ್ಲಿಟ್ಟಿದ್ದರು.</verse>
				<verse number="59">ನ್ಯಾಯಸಭೆಯವರು ಕಲ್ಲೆಸೆಯುತ್ತಿದ್ದಾಗ, ಸ್ತೆಫನನು, “ಕರ್ತ ಯೇಸುವೇ, ನನ್ನ ಆತ್ಮವನ್ನು ಸ್ವೀಕರಿಸಿರಿ,” ಎಂದು ಪ್ರಾರ್ಥಿಸಿದನು.</verse>
				<verse number="60">ಅನಂತರ ಮೊಣಕಾಲೂರಿ, “ಕರ್ತ ಯೇಸುವೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡ,” ಎಂದು ಗಟ್ಟಿಯಾಗಿ ಕೂಗಿದನು. ಇದನ್ನು ಹೇಳಿದ ಮೇಲೆ, ಪ್ರಾಣಬಿಟ್ಟನು.</verse>
			</chapter>
			<chapter number="8">
				<verse number="1">ಸೌಲನು ಸ್ತೆಫನನ ಕೊಲೆಗೆ ಸಮ್ಮತಿಸಿದ್ದನು. ಆ ದಿನವೇ ಯೆರೂಸಲೇಮಿನ ಸಭೆಗೆ ವಿರೋಧವಾಗಿ ಮಹಾಹಿಂಸೆ ಪ್ರಾರಂಭವಾಯಿತು, ಅಪೊಸ್ತಲರನ್ನು ಬಿಟ್ಟು ಉಳಿದವರೆಲ್ಲರೂ ಯೂದಾಯ ಮತ್ತು ಸಮಾರ್ಯ ಪ್ರಾಂತಗಳಿಗೆ ಚದರಿಹೋದರು.</verse>
				<verse number="2">ದೇವಭಕ್ತರು ಸ್ತೆಫನನ ಶವಸಂಸ್ಕಾರ ಮಾಡಿ, ಅವನಿಗಾಗಿ ಬಹಳ ಗೋಳಾಡಿದರು.</verse>
				<verse number="3">ಆದರೆ ಸೌಲನು ಸಭೆಯನ್ನು ಹಾಳುಮಾಡಲು ಪ್ರಾರಂಭಿಸಿದನು. ಅವನು ಮನೆಮನೆಗಳಿಗೆ ಹೋಗಿ ಸ್ತ್ರೀಪುರುಷರನ್ನು ಹೊರಗೆಳೆದು ಅವರನ್ನು ಸೆರೆಮನೆಯಲ್ಲಿ ಹಾಕಿಸಿದನು.</verse>
				<verse number="4">ಚದರಿಹೋದವರು ತಾವು ಹೋದಲ್ಲೆಲ್ಲಾ ವಾಕ್ಯವನ್ನು ಬೋಧಿಸಿದರು.</verse>
				<verse number="5">ಫಿಲಿಪ್ಪನು ಸಮಾರ್ಯದ ಒಂದು ಪಟ್ಟಣಕ್ಕೆ ಹೋಗಿ ಅಲ್ಲಿ ಕ್ರಿಸ್ತ ಯೇಸುವಿನ ಸಂದೇಶ ಸಾರಿದನು.</verse>
				<verse number="6">ಜನಸಮೂಹವು ಫಿಲಿಪ್ಪನ ಬೋಧನೆ ಕೇಳಿ, ಅವನು ಮಾಡಿದ ಸೂಚಕಕಾರ್ಯಗಳನ್ನು ಕಂಡು, ಅವನು ಹೇಳಿದ್ದಕ್ಕೆಲ್ಲಾ ಮನಸ್ಸು ಕೊಟ್ಟರು.</verse>
				<verse number="7">ಅನೇಕರಿಂದ ಅಶುದ್ಧಾತ್ಮಗಳು ಆರ್ಭಟಿಸುತ್ತಾ ಹೊರಗೋಡಿದವು. ಮಾತ್ರವಲ್ಲದೇ ಅನೇಕ ಪಾರ್ಶ್ವವಾಯು ಪೀಡಿತರು, ಅಂಗವಿಕಲರು ಸ್ವಸ್ಥರಾದರು.</verse>
				<verse number="8">ಇದರಿಂದ ಆ ಪಟ್ಟಣದಲ್ಲಿ ಮಹಾ ಸಂತೋಷವಾಯಿತು.</verse>
				<verse number="9">ಆ ಪಟ್ಟಣದಲ್ಲಿ ಕೆಲ ಸಮಯದಿಂದ ಸೀಮೋನ ಎಂಬ ಹೆಸರಿನ ಒಬ್ಬನು ಮಂತ್ರ ವಿದ್ಯೆ ಉಪಯೋಗಿಸಿ ಸಮಾರ್ಯದ ಜನರನ್ನು ಆಶ್ಚರ್ಯಗೊಳಿಸಿದ್ದನು. ತಾನೊಬ್ಬ ಮಹಾವ್ಯಕ್ತಿ ಎಂದು ಕೊಚ್ಚಿಕೊಳ್ಳುತ್ತಿದ್ದನು,</verse>
				<verse number="10">ಆ ಪಟ್ಟಣದಲ್ಲಿಯ ಹಿರಿಯರು, ಕಿರಿಯರು ಎಲ್ಲರೂ ಅವನನ್ನು ಗೌರವಿಸಿ, “ಈ ಮನುಷ್ಯನು ಮಹಾಶಕ್ತಿ ಎನಿಸಿಕೊಂಡ ದೇವರ ಶಕ್ತಿ” ಎಂದು ಹೇಳುತ್ತಿದ್ದರು.</verse>
				<verse number="11">ಸೀಮೋನನು ತನ್ನ ಮಂತ್ರಶಕ್ತಿಯಿಂದ ಅವರನ್ನು ಆಶ್ಚರ್ಯಗೊಳಿಸಿದ್ದರಿಂದ ಅವರು ಅವನನ್ನು ಹಿಂಬಾಲಿಸುತ್ತಿದ್ದರು.</verse>
				<verse number="12">ಆದರೆ ಫಿಲಿಪ್ಪನು ದೇವರ ರಾಜ್ಯದ ಶುಭವರ್ತಮಾನವನ್ನೂ ಕ್ರಿಸ್ತ ಯೇಸುವಿನ ಹೆಸರನ್ನೂ ಪ್ರಕಟಿಸಿದಾಗ ಅಲ್ಲಿಯ ಸ್ತ್ರೀ ಪುರುಷರು ಅದನ್ನು ನಂಬಿ ದೀಕ್ಷಾಸ್ನಾನವನ್ನು ಹೊಂದಿದರು.</verse>
				<verse number="13">ಸೀಮೋನನು ಸಹ ವಿಶ್ವಾಸವಿಟ್ಟು, ದೀಕ್ಷಾಸ್ನಾನ ಹೊಂದಿದನು. ಫಿಲಿಪ್ಪ ಮಾಡಿದ ಮಹಾಸೂಚಕಕಾರ್ಯಗಳನ್ನು ಮತ್ತು ಅದ್ಭುತಗಳನ್ನು ಕಂಡು, ಬೆರಗಾಗಿ ಅವನು ಹೋದಲ್ಲೆಲ್ಲಾ ಅವನನ್ನು ಹಿಂಬಾಲಿಸುತ್ತಿದ್ದನು.</verse>
				<verse number="14">ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದರು ಎಂಬ ಸಮಾಚಾರ ಯೆರೂಸಲೇಮಿನಲ್ಲಿದ್ದ ಅಪೊಸ್ತಲರಿಗೆ ತಲುಪಿದ್ದರಿಂದ, ಅವರ ಬಳಿಗೆ ಪೇತ್ರ ಮತ್ತು ಯೋಹಾನರನ್ನು ಕಳುಹಿಸಿದರು.</verse>
				<verse number="15">ಇವರು ತಲುಪಿದಾಗ, ಅಲ್ಲಿಯವರು ಪವಿತ್ರಾತ್ಮ ದೇವರನ್ನು ಹೊಂದಿಕೊಳ್ಳುವುದಕ್ಕಾಗಿ ಪ್ರಾರ್ಥನೆ ಮಾಡಿದರು.</verse>
				<verse number="16">ಏಕೆಂದರೆ ಅವರಲ್ಲಿ ಯಾರ ಮೇಲೆಯೂ ಪವಿತ್ರಾತ್ಮ ಬಂದಿರಲಿಲ್ಲ, ಅವರು ಕರ್ತ ಯೇಸುವಿನ ನಾಮದಲ್ಲಿ ದೀಕ್ಷಾಸ್ನಾನವನ್ನು ಹೊಂದಿದ್ದರಷ್ಟೇ.</verse>
				<verse number="17">ಆಗ ಪೇತ್ರ ಮತ್ತು ಯೋಹಾನರು ಅವರ ಮೇಲೆ ತಮ್ಮ ಕೈಗಳನ್ನಿಡಲು, ಅವರು ಪವಿತ್ರಾತ್ಮ ವರವನ್ನು ಹೊಂದಿದರು.</verse>
				<verse number="18">ಅಪೊಸ್ತಲರು ತಮ್ಮ ಕೈಗಳನ್ನಿಡಲು ಪವಿತ್ರಾತ್ಮ ದೊರೆತದ್ದನ್ನು ಕಂಡ ಸೀಮೋನನು, ಅವರಿಗೆ ಹಣವನ್ನು ಕೊಟ್ಟು,</verse>
				<verse number="19">“ನಾನು ಯಾರ ಮೇಲೆ ಕೈಗಳನ್ನಿಡುವೆನೋ ಅವರೂ ಪವಿತ್ರಾತ್ಮ ವರವನ್ನು ಪಡೆದುಕೊಳ್ಳುವಂತೆ ಈ ಶಕ್ತಿಯನ್ನು ಕೊಡಬೇಕು,” ಎಂದು ಕೇಳಿದನು.</verse>
				<verse number="20">ಅದಕ್ಕೆ ಪೇತ್ರನು, “ದೇವರ ವರವನ್ನು ಹಣಕೊಟ್ಟು ಕೊಂಡುಕೊಳ್ಳಬಹುದೆಂದು ನೀನು ಭಾವಿಸಿದ್ದರಿಂದ ನೀನು ನಿನ್ನ ಹಣದೊಂದಿಗೆ ನಾಶವಾಗಿಹೋಗು!</verse>
				<verse number="21">ನಿನ್ನ ಹೃದಯವು ದೇವರ ದೃಷ್ಟಿಯಲ್ಲಿ ಸರಿಯಾಗಿಲ್ಲವಾದ್ದರಿಂದ ಈ ಸೇವೆಯಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ.</verse>
				<verse number="22">ಈ ದುಷ್ಟತನಕ್ಕಾಗಿ ಪಶ್ಚಾತ್ತಾಪಪಟ್ಟು ಕರ್ತ ಯೇಸುವನ್ನು ಬೇಡಿಕೋ, ಒಂದು ವೇಳೆ ಅವರು ನಿನ್ನ ಹೃದಯದಲ್ಲಿದ್ದ ಈ ವಿಚಾರವನ್ನು ಕ್ಷಮಿಸಬಹುದು.</verse>
				<verse number="23">ನೀನು ಕಹಿತನದಿಂದ ತುಂಬಿರುವೆ; ಪಾಪ ಬಂಧನದಲ್ಲಿರುವೆ ಎಂದು ಕಾಣುತ್ತಿದ್ದೇನೆ,” ಎಂದನು.</verse>
				<verse number="24">ಆಗ ಸೀಮೋನನು, “ನೀವು ಹೇಳಿದ ಯಾವುದೂ ನನಗೆ ಸಂಭವಿಸದಂತೆ ನನಗೋಸ್ಕರ ಕರ್ತ ಯೇಸುವಿನಲ್ಲಿ ಪ್ರಾರ್ಥಿಸಿರಿ,” ಎಂದು ಬೇಡಿಕೊಂಡನು.</verse>
				<verse number="25">ಪೇತ್ರ ಯೋಹಾನರು ಕರ್ತದೇವರ ವಾಕ್ಯದ ಸಾಕ್ಷಿ ಹೇಳಿ ಬೋಧನೆ ಮಾಡಿದ ತರುವಾಯ ಸಮಾರ್ಯದ ಅನೇಕ ಗ್ರಾಮಗಳಲ್ಲಿ ಸುವಾರ್ತೆ ಸಾರಿ, ಯೆರೂಸಲೇಮಿಗೆ ಹಿಂದಿರುಗಿದರು.</verse>
				<verse number="26">ದೇವದೂತನೊಬ್ಬನು ಫಿಲಿಪ್ಪನಿಗೆ, “ದಕ್ಷಿಣ ದಿಕ್ಕಿಗೆ ಹೋಗುವ ಮಾರ್ಗದಲ್ಲಿ ಹೋಗು, ಅದು ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ಅರಣ್ಯ ಮಾರ್ಗ,” ಎಂದು ಹೇಳಿದನು.</verse>
				<verse number="27">ಅದರಂತೆ ಅವನು ಹೋಗುತ್ತಿದ್ದಾಗ, ಮಾರ್ಗದಲ್ಲಿ ಐಥಿಯೋಪ್ಯದ ರಾಣಿ ಕಂದಾಕೆಯ ಹಣಕಾಸಿನ ಮುಖ್ಯ ಅಧಿಕಾರಿಯಾಗಿದ್ದ ಕಂಚುಕಿಯನ್ನು ಭೇಟಿಯಾದನು. ಈ ಮನುಷ್ಯನು ಆರಾಧನೆಗಾಗಿ ಯೆರೂಸಲೇಮಿಗೆ ಹೋಗಿದ್ದನು.</verse>
				<verse number="28">ಈಗ ತನ್ನ ಮನೆಗೆ ಹಿಂತಿರುಗುತ್ತಿದ್ದಾಗ ರಥದಲ್ಲಿ ಕುಳಿತುಕೊಂಡು ಪ್ರವಾದಿ ಯೆಶಾಯನ ಗ್ರಂಥವನ್ನು ಓದುತ್ತಿದ್ದನು.</verse>
				<verse number="29">ಆಗ, “ನೀನು ಹೋಗಿ ಆ ರಥದ ಜೊತೆಯಲ್ಲಿಯೇ ನಡೆ,” ಎಂದು ಪವಿತ್ರಾತ್ಮರು ಫಿಲಿಪ್ಪನಿಗೆ ಹೇಳಿದರು.</verse>
				<verse number="30">ಫಿಲಿಪ್ಪನು ರಥದ ಹತ್ತಿರಕ್ಕೆ ಓಡಿದನು. ಆ ಮನುಷ್ಯನು ಪ್ರವಾದಿ ಯೆಶಾಯನ ಗ್ರಂಥ ಓದುತ್ತಿರುವುದನ್ನು ಕೇಳಿಸಿಕೊಂಡು, “ನೀವು ಓದುತ್ತಿರುವುದು ನಿಮಗೆ ಅರ್ಥವಾಗುತ್ತಿದೆಯೇ?” ಎಂದು ಫಿಲಿಪ್ಪನು ಪ್ರಶ್ನಿಸಿದನು.</verse>
				<verse number="31">ಅವನು, “ಯಾರಾದರೊಬ್ಬರು ಅದನ್ನು ವಿವರಿಸದಿದ್ದರೆ ನನಗೆ ಅರ್ಥವಾಗುವುದು ಹೇಗೆ?” ಎಂದು ಹೇಳಿ, ರಥವನ್ನು ಹತ್ತಿ ತನ್ನೊಂದಿಗೆ ಕುಳಿತುಕೊಳ್ಳುವಂತೆ ಫಿಲಿಪ್ಪನನ್ನು ಆಮಂತ್ರಿಸಿದನು.</verse>
				<verse number="32">ಕಂಚುಕಿ ಈ ವಾಕ್ಯಭಾಗವನ್ನು ಓದುತ್ತಿದ್ದನು: “ವಧಿಸಲಿಕ್ಕೆ ಒಯ್ದ ಕುರಿಯಂತೆ ಅವರನ್ನು ಕರೆದುಕೊಂಡು ಹೋದರು. ಉಣ್ಣೆ ಕತ್ತರಿಸುವವರ ಮುಂದೆ ಇರುವ ಕುರಿಮರಿಯಂತೆ ಅವರು ಮೌನವಾಗಿದ್ದರು. ಇನ್ನು ಅವರು ತಮ್ಮ ಬಾಯಿ ತೆರೆಯಲೇ ಇಲ್ಲ.</verse>
				<verse number="33">ಅವರ ಅವಮಾನದಲ್ಲಿ ನ್ಯಾಯವು ಅವರಿಂದ ತೆಗೆಯಲಾಯಿತು. ಭೂಮಿಯಿಂದ ಆತನ ಜೀವವನ್ನು ತೆಗೆದೇಬಿಟ್ಟರಲ್ಲವೇ, ಆತನ ಸಂತತಿಯವರ ಬಗ್ಗೆ ಮಾತನಾಡಬಲ್ಲವರು ಯಾರು?”</verse>
				<verse number="34">ನಂತರ ಕಂಚುಕಿಯು, “ಪ್ರವಾದಿ ಇಲ್ಲಿ ಯಾರ ಬಗ್ಗೆ ಮಾತನಾಡುತ್ತಿದ್ದಾನೆ, ತನ್ನನ್ನು ಕುರಿತೋ ಅಥವಾ ಬೇರೆಯವರನ್ನು ಕುರಿತೋ? ನನಗೆ ಹೇಳು,” ಎಂದು ಫಿಲಿಪ್ಪನನ್ನು ಕೇಳಿದನು.</verse>
				<verse number="35">ಪವಿತ್ರ ವೇದದ ಆ ಭಾಗದಿಂದಲೇ ಪ್ರಾರಂಭಿಸಿ ಫಿಲಿಪ್ಪನು ಅವನಿಗೆ ಯೇಸುವಿನ ಕುರಿತಾದ ಶುಭವಾರ್ತೆಯನ್ನು ತಿಳಿಸಿದನು.</verse>
				<verse number="36">ಮಾರ್ಗದಲ್ಲಿ ಅವರು ಮುಂದೆ ಪ್ರಯಾಣ ಮಾಡುತ್ತಿದ್ದಾಗ, ನೀರಿದ್ದ ಸ್ಥಳಕ್ಕೆ ಬಂದರು. ಆಗ ಕಂಚುಕಿ, “ಇಗೋ ಇಲ್ಲಿ ನೀರಿದೆ. ನನಗೆ ಏಕೆ ದೀಕ್ಷಾಸ್ನಾನ ಕೊಡಬಾರದು?” ಎಂದನು.</verse>
				<verse number="37">“ನೀನು ಪೂರ್ಣಹೃದಯದಿಂದ ನಂಬಿದರೆ ನಿನಗೆ ದೀಕ್ಷಾಸ್ನಾನವಾಗಬಹುದು,” ಎಂದು ಫಿಲಿಪ್ಪನು ಹೇಳಿದನು. “ಕ್ರಿಸ್ತ ಯೇಸುವೇ ದೇವಪುತ್ರರು ಎಂದು ನಾನು ನಂಬುತ್ತೇನೆ,” ಎಂದು ಕಂಚುಕಿಯು ಪ್ರಕಟಿಸಿದನು.</verse>
				<verse number="38">ರಥವನ್ನು ನಿಲ್ಲಿಸಲು ಅಪ್ಪಣೆಕೊಟ್ಟ ನಂತರ ಫಿಲಿಪ್ಪನು ಮತ್ತು ಕಂಚುಕಿ ಇಬ್ಬರೂ ನೀರೊಳಗೆ ಹೋದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.</verse>
				<verse number="39">ಅವರು ನೀರಿನಿಂದ ಹೊರಗೆ ಬಂದಾಗ, ತಕ್ಷಣವೇ ಕರ್ತದೇವರ ಆತ್ಮರು ಫಿಲಿಪ್ಪನನ್ನು ತೆಗೆದುಕೊಂಡು ಹೋದರು. ಆಮೇಲೆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಕಂಚುಕಿಯು ಸಂತೋಷಪಡುತ್ತಾ ತನ್ನ ಮಾರ್ಗದಲ್ಲಿ ಹೊರಟುಹೋದನು.</verse>
				<verse number="40">ಫಿಲಿಪ್ಪನು, ಅಜೋತಿನಲ್ಲಿ ಕಾಣಿಸಿಕೊಂಡು, ಕೈಸರೈಯ ತಲುಪುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಪ್ರಯಾಣಮಾಡಿದನು.</verse>
			</chapter>
			<chapter number="9">
				<verse number="1">ಇಷ್ಟರಲ್ಲಿ, ಸೌಲನು ಕರ್ತ ಯೇಸುವಿನ ಶಿಷ್ಯರನ್ನು ಕೊಲೆಮಾಡುವ ಬೆದರಿಕೆಯನ್ನು ಹಾಕುತ್ತಲೇ ಇನ್ನೂ ಮುಂದುವರೆದನು. ಮಹಾಯಾಜಕನ ಬಳಿಗೆ ಹೋಗಿ,</verse>
				<verse number="2">ಈ ಮಾರ್ಗಕ್ಕೆ ಸಂಬಂಧಪಟ್ಟ ಪುರುಷರಾಗಲಿ ಸ್ತ್ರೀಯರಾಗಲಿ ದಮಸ್ಕದಲ್ಲಿದ್ದರೆ ಅವರನ್ನು ತಾನು ಬಂಧಿಸಿ ಯೆರೂಸಲೇಮಿಗೆ ತರಲಿಕ್ಕಾಗುವಂತೆ ದಮಸ್ಕದಲ್ಲಿಯ ಸಭಾಮಂದಿರಗಳಿಗೆ ಕೊಡಲು ಮಹಾಯಾಜಕನಿಂದ ಪತ್ರ ಪಡೆದುಕೊಂಡನು.</verse>
				<verse number="3">ಸೌಲನು ಪ್ರಯಾಣ ಮಾಡುತ್ತಾ ದಮಸ್ಕಕ್ಕೆ ಸಮೀಪ ಬಂದಾಗ, ಫಕ್ಕನೆ ಪರಲೋಕದಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು.</verse>
				<verse number="4">ಅವನು ನೆಲದ ಮೇಲೆ ಬೀಳಲು, “ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿಸಿಕೊಂಡನು.</verse>
				<verse number="5">“ಸ್ವಾಮಿ, ತಾವು ಯಾರು?” ಎಂದು ಸೌಲನು ಪ್ರಶ್ನಿಸಲು, “ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು.</verse>
				<verse number="6">ಎದ್ದೇಳು ಪಟ್ಟಣದೊಳಗೆ ಹೋಗು, ನೀನು ಏನು ಮಾಡಬೇಕು ಎಂಬುದನ್ನು ಅಲ್ಲಿ ನಿನಗೆ ತಿಳಿಸಲಾಗುವುದು,” ಎಂದು ಕರ್ತ ಯೇಸು ಹೇಳಿದರು.</verse>
				<verse number="7">ಸೌಲನೊಂದಿಗೆ ಪ್ರಯಾಣ ಮಾಡುತ್ತಿದ್ದವರು ಮೂಕರಂತೆ ನಿಂತುಕೊಂಡರು. ಅವರಿಗೆ ಧ್ವನಿ ಕೇಳಿಸಿತೇ ಹೊರತು ಯಾರೂ ಕಾಣಲಿಲ್ಲ.</verse>
				<verse number="8">ಸೌಲನು ನೆಲದಿಂದ ಎದ್ದ ಮೇಲೆ ಕಣ್ಣು ತೆರೆದಾಗ ಏನೂ ಕಾಣಿಸಲಿಲ್ಲ. ಅವರು ಅವನ ಕೈಹಿಡಿದು ದಮಸ್ಕದೊಳಗೆ ಕರೆದುಕೊಂಡು ಹೋದರು.</verse>
				<verse number="9">ಮೂರು ದಿನ ಅವನು ಕುರುಡನಾಗಿದ್ದನು. ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ.</verse>
				<verse number="10">ದಮಸ್ಕದಲ್ಲಿ ಅನನೀಯ ಎಂಬ ಹೆಸರಿನ ಶಿಷ್ಯನಿದ್ದನು. ದರ್ಶನದಲ್ಲಿ ಕರ್ತ ಯೇಸುವು ಅವನನ್ನು, “ಅನನೀಯಾ!” ಎಂದು ಕರೆದರು. “ಇಗೋ, ಇದ್ದೇನೆ ಸ್ವಾಮಿ,” ಎಂದು ಅವನು ಉತ್ತರಕೊಟ್ಟನು.</verse>
				<verse number="11">ಕರ್ತ ಯೇಸುವು ಅವನಿಗೆ, “ನೀನೆದ್ದು ‘ನೇರ ಬೀದಿ’ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬುವನನ್ನು ವಿಚಾರಿಸು. ಅವನು ಪ್ರಾರ್ಥನೆ ಮಾಡುತ್ತಿದ್ದಾನೆ.</verse>
				<verse number="12">ತನ್ನ ದೃಷ್ಟಿ ಪುನಃ ಬರುವಂತೆ ಅನನೀಯ ಎಂಬ ಹೆಸರಿನ ಒಬ್ಬ ಮನುಷ್ಯನು ಬಂದು ತನ್ನ ಮೇಲೆ ಕೈಗಳನ್ನಿಡುವುದನ್ನು ಅವನು ದರ್ಶನದಲ್ಲಿ ಕಂಡಿದ್ದಾನೆ,” ಎಂದು ಹೇಳಿದರು.</verse>
				<verse number="13">ಆಗ ಅನನೀಯನು, “ಸ್ವಾಮಿ, ಈ ಮನುಷ್ಯನ ಬಗ್ಗೆ ಬಹಳ ಕೇಳಿದ್ದೇನೆ. ಯೆರೂಸಲೇಮಿನಲ್ಲಿ ನಿಮ್ಮ ಭಕ್ತರಿಗೆ ಬಹಳ ಕೇಡು ಮಾಡಿದ್ದಾನೆ.</verse>
				<verse number="14">ಇಲ್ಲಿ ನಿಮ್ಮ ಹೆಸರನ್ನು ಹೇಳಿಕೊಳ್ಳುವವರೆಲ್ಲರನ್ನು ಬಂಧಿಸಲು ಮುಖ್ಯಯಾಜಕನಿಂದ ಅಧಿಕಾರದ ಪತ್ರ ಪಡೆದು ಬಂದಿದ್ದಾನೆ,” ಎಂದು ಉತ್ತರಕೊಟ್ಟನು.</verse>
				<verse number="15">ಆದರೆ ಕರ್ತ ಯೇಸುವು ಅವನಿಗೆ, “ಹೋಗು! ಯೆಹೂದ್ಯರಲ್ಲದವರಿಗೂ ಅವರ ಅರಸುಗಳಿಗೂ ಇಸ್ರಾಯೇಲ್ ದೇಶಕ್ಕೂ ನನ್ನ ಹೆಸರನ್ನು ಪ್ರಸಿದ್ಧಿಪಡಿಸಲು ಅವನು ನಾನು ಆಯ್ದುಕೊಂಡ ಸಾಧನವಾಗಿದ್ದಾನೆ.</verse>
				<verse number="16">ನನ್ನ ಹೆಸರಿನ ನಿಮಿತ್ತವಾಗಿ ಅವನು ಎಷ್ಟು ಕಷ್ಟಪಡಬೇಕೆಂಬುದನ್ನು ನಾನು ಅವನಿಗೆ ತೋರಿಸುವೆನು,” ಎಂದು ಹೇಳಿದರು.</verse>
				<verse number="17">ಆಮೇಲೆ ಅನನೀಯನು ಆ ಮನೆಗೆ ಹೋಗಿ ಒಳಗೆ ಪ್ರವೇಶಿಸಿದನು. ತನ್ನ ಕೈಗಳನ್ನು ಸೌಲನ ಮೇಲಿಟ್ಟು, “ಸಹೋದರ ಸೌಲನೇ, ನೀನು ಇಲ್ಲಿಗೆ ಬರುತ್ತಿದ್ದಾಗ ದಾರಿಯಲ್ಲಿ ನಿನಗೆ ದರ್ಶನಕೊಟ್ಟ ಕರ್ತ ಯೇಸು, ನಿನಗೆ ಪುನಃ ದೃಷ್ಟಿ ಬರುವಂತೆಯೂ ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದು ಹೇಳಲು,</verse>
				<verse number="18">ತಕ್ಷಣವೇ, ಸೌಲನ ಕಣ್ಣುಗಳಿಂದ ಪರೆ ಕಳಚಿದಂತಾಗಿ ಅವನಿಗೆ ಪುನಃ ದೃಷ್ಟಿ ಬಂದಿತು. ಅವನು ಎದ್ದು ದೀಕ್ಷಾಸ್ನಾನವನ್ನು ಪಡೆದುಕೊಂಡನು.</verse>
				<verse number="19">ತರುವಾಯ ಊಟಮಾಡಿ ಚೇತರಿಸಿಕೊಂಡನು. ಆಗ ಅವನು ಎದ್ದು ನಿಲ್ಲಲು ಶಕ್ತನಾದನು. ದಮಸ್ಕದಲ್ಲಿ ಶಿಷ್ಯರೊಂದಿಗೆ ಸೌಲನು ಹಲವಾರು ದಿನಗಳನ್ನು ಕಳೆದನು.</verse>
				<verse number="20">ತಡಮಾಡದೆ, ಯೇಸುವೇ “ದೇವಪುತ್ರ” ಎಂದು ಸಭಾಮಂದಿರಗಳಲ್ಲಿ ಸಾರಲು ಪ್ರಾರಂಭಿಸಿದನು.</verse>
				<verse number="21">ಅವನ ಮಾತುಗಳನ್ನು ಕೇಳಿದವರಿಗೆ ಅತ್ಯಾಶ್ಚರ್ಯವಾಯಿತು. ಅವರು, “ಈ ಹೆಸರನ್ನು ಹೇಳುವವರೆಲ್ಲರಿಗೆ ಯೆರೂಸಲೇಮಿನಲ್ಲಿ ತೊಂದರೆಕೊಟ್ಟು ಗೊಂದಲವೆಬ್ಬಿಸಿದವನು ಇವನೇ ಅಲ್ಲವೇ? ಅಂಥವರನ್ನು ಸೆರೆಹಿಡಿದು ಮುಖ್ಯಯಾಜಕರ ಬಳಿಗೆ ಎಳೆದೊಯ್ಯಲು ಇಲ್ಲಿಗೆ ಬಂದವನಲ್ಲವೇ?” ಎಂದು ಪ್ರಶ್ನಿಸಿಕೊಂಡರು.</verse>
				<verse number="22">ಆದರೂ ಸೌಲನು ಹೆಚ್ಚೆಚ್ಚು ಸಾಮರ್ಥ್ಯವುಳ್ಳವನಾಗಿ ಯೇಸುವೇ ಕ್ರಿಸ್ತ ಆಗಿದ್ದಾರೆಂದು ರುಜುವಾತುಪಡಿಸುತ್ತಾ ದಮಸ್ಕದ ನಿವಾಸಿಗಳಾದ ಯೆಹೂದ್ಯರನ್ನು ಗಲಿಬಿಲಿಗೆ ಒಳಪಡಿಸಿದನು.</verse>
				<verse number="23">ಅನೇಕ ದಿನಗಳ ತರುವಾಯ, ಸೌಲನನ್ನು ಕೊಲ್ಲಲು ಯೆಹೂದ್ಯರು ರಹಸ್ಯವಾಗಿ ಯೋಚಿಸಿದರು.</verse>
				<verse number="24">ಆದರೆ ಅವರ ಯೋಚನೆ ಸೌಲನಿಗೆ ತಿಳಿಯಿತು. ಅವರು ಅವನನ್ನು ಕೊಲ್ಲುವುದಕ್ಕಾಗಿ ಹಗಲಿರುಳು ಪಟ್ಟಣದ ದ್ವಾರಗಳ ಬಳಿಯಲ್ಲಿ ಹೊಂಚುಹಾಕುತ್ತಿದ್ದರು.</verse>
				<verse number="25">ಆದರೆ ಸೌಲನ ಅನುಯಾಯಿಗಳು ರಾತ್ರಿಯಲ್ಲಿ ಅವನನ್ನು ಕರೆದುಕೊಂಡು ಹೋಗಿ, ಬುಟ್ಟಿಯಲ್ಲಿ ಕುಳ್ಳಿರಿಸಿ, ಗೋಡೆಯ ಕಿಟಿಕಿಯ ಮುಖಾಂತರ ಹೊರಗೆ ಕೆಳಗಿಳಿಸಿದರು.</verse>
				<verse number="26">ಸೌಲನು ಯೆರೂಸಲೇಮಿಗೆ ಬಂದು, ಶಿಷ್ಯರ ಜೊತೆಯಲ್ಲಿರಲು ಪ್ರಯತ್ನಿಸಿದನು. ಆದರೆ ಅವನು ನಿಜವಾಗಿಯೂ ಶಿಷ್ಯನೆಂದು ನಂಬದೆ ಅವರು ಅವನಿಗೆ ಭಯಪಟ್ಟಿದ್ದರು.</verse>
				<verse number="27">ಬಾರ್ನಬನು ಅವನನ್ನು ಕರೆದುಕೊಂಡು ಅಪೊಸ್ತಲರ ಬಳಿಗೆ ಬಂದನು. ಸೌಲನು ಪ್ರಯಾಣ ಮಾಡುತ್ತಿದ್ದಾಗ ಅವನಿಗೆ ಕರ್ತ ಯೇಸು ದರ್ಶನವಾದದ್ದನ್ನೂ ಕರ್ತ ಯೇಸು ಅವನೊಂದಿಗೆ ಮಾತನಾಡಿದ್ದನ್ನೂ ಯಾವ ಭಯವಿಲ್ಲದೆ ದಮಸ್ಕದಲ್ಲಿ ಯೇಸುವಿನ ಹೆಸರಿನಲ್ಲಿ ಅವನು ಬೋಧಿಸಿದ್ದನ್ನೂ ಬಾರ್ನಬನು ತಿಳಿಸಿದನು.</verse>
				<verse number="28">ಹೀಗೆ ಸೌಲನು ಅಪೊಸ್ತಲರೊಂದಿಗೆ ಇದ್ದು ಯೆರೂಸಲೇಮಿನಲ್ಲಿ ಆತಂಕವಿಲ್ಲದೆ ತಿರುಗಾಡಿ ಕರ್ತ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದನು.</verse>
				<verse number="29">ಗ್ರೀಕ್ ಮಾತನಾಡುವ ಯೆಹೂದ್ಯರೊಂದಿಗೆ ಅವನು ಮಾತನಾಡಿ ಚರ್ಚೆಮಾಡಿದಾಗ, ಅವರು ಅವನನ್ನು ಕೊಲ್ಲಲು ಪ್ರಯತ್ನಿಸಿದರು.</verse>
				<verse number="30">ಸಹೋದರರಿಗೆ ಈ ಸುದ್ದಿ ತಿಳಿದಾಗ, ಅವರು ಸೌಲನನ್ನು ಕೈಸರೈಯಕ್ಕೆ ಕರೆದುಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.</verse>
				<verse number="31">ಆ ಸಮಯದಲ್ಲಿ ಯೂದಾಯ, ಗಲಿಲಾಯ, ಸಮಾರ್ಯದಲ್ಲೆಲ್ಲಾ ಇದ್ದ ಸಭೆಯು ಸಮಾಧಾನ ಹೊಂದಿತು. ಸಭೆ ಬಲಗೊಂಡು ಪವಿತ್ರಾತ್ಮರಿಂದ ಧೈರ್ಯಹೊಂದಿ ಸಂಖ್ಯೆಯಲ್ಲಿ ವೃದ್ಧಿಸುತ್ತಾ, ಕರ್ತ ಯೇಸುವಿನ ಭಯದಲ್ಲಿ ಮುನ್ನಡೆಯಿತು.</verse>
				<verse number="32">ಪೇತ್ರನು ಬೇರೆ ಬೇರೆ ಕಡೆಗಳಲ್ಲಿ ಪ್ರಯಾಣಮಾಡಿದ ತರುವಾಯ ಲುದ್ದದಲ್ಲಿಯ ದೇವಭಕ್ತರನ್ನು ಸಂದರ್ಶಿಸಲು ಹೋದನು.</verse>
				<verse number="33">ಅಲ್ಲಿ ಐನೇಯ ಎಂಬ ಹೆಸರಿನ ಒಬ್ಬಾತನನ್ನು ಸಂದರ್ಶಿಸಿದನು. ಅವನು ಪಾರ್ಶ್ವವಾಯು ರೋಗ ಪೀಡಿತನಾಗಿ ಎಂಟು ವರ್ಷಗಳಿಂದ ಹಾಸಿಗೆ ಹಿಡಿದಿದ್ದನು.</verse>
				<verse number="34">ಪೇತ್ರನು ಅವನಿಗೆ, “ಐನೇಯ, ಕ್ರಿಸ್ತ ಯೇಸುವು ನಿನ್ನನ್ನು ಗುಣಪಡಿಸುತ್ತಾರೆ. ಏಳು, ನಿನ್ನ ಹಾಸಿಗೆಯನ್ನು ಸುತ್ತಿಡು,” ಎಂದು ಹೇಳಲು, ತಕ್ಷಣವೇ ಐನೇಯ ಮೇಲಕ್ಕೆದ್ದನು.</verse>
				<verse number="35">ಲುದ್ದ ಹಾಗೂ ಸಾರೋನಿನ ನಿವಾಸಿಗಳೆಲ್ಲರೂ ಅವನನ್ನು ಕಂಡು ಕರ್ತ ಯೇಸುವಿನ ಕಡೆಗೆ ತಿರುಗಿಕೊಂಡರು.</verse>
				<verse number="36">ಯೊಪ್ಪ ಎಂಬಲ್ಲಿ ತಬಿಥಾ ಎಂಬ ಹೆಸರಿನ ದೇವಭಕ್ತೆ ಇದ್ದಳು. ಈ ಹೆಸರಿನ ಗ್ರೀಕ್ ಭಾಷಾಂತರ “ದೊರ್ಕ” ಎಂದಾಗುತ್ತದೆ. ಆಕೆ ಬಡವರಿಗೆ ಸಹಾಯ ಮಾಡುತ್ತಾ ಯಾವಾಗಲೂ ಒಳ್ಳೆಯದನ್ನೇ ಮಾಡುತ್ತಿದ್ದಳು.</verse>
				<verse number="37">ಆ ಸಮಯದಲ್ಲಿ ಆಕೆ ಅಸ್ವಸ್ಥಳಾಗಿ ಸತ್ತುಹೋದಳು. ಆಕೆಯ ಶವಕ್ಕೆ ಸ್ನಾನಮಾಡಿಸಿ, ಅದನ್ನು ಮೇಲೆ ಮಾಳಿಗೆಯ ಕೋಣೆಯಲ್ಲಿ ಇಟ್ಟರು.</verse>
				<verse number="38">ಲುದ್ದ ಊರು ಯೊಪ್ಪ ಊರಿಗೆ ಸಮೀಪದಲ್ಲಿತ್ತು. ಪೇತ್ರನು ಲುದ್ದದಲ್ಲಿರುವುದು ದೇವ ಭಕ್ತರಿಗೆ ತಿಳಿಯಲು ಅವರು, “ಕೂಡಲೇ ಬರಬೇಕು,” ಎಂದು ಹೇಳಿ ಅವನನ್ನು ಕರೆದುಕೊಂಡು ಬರಲು ಇಬ್ಬರನ್ನು ಕಳುಹಿಸಿದರು.</verse>
				<verse number="39">ಅವರೊಂದಿಗೆ ಪೇತ್ರನು ಹೊರಟನು. ಅವನು ಬಂದಾಗ ಅವನನ್ನು ಮೇಲಂತಸ್ತಿನ ಕೋಣೆಗೆ ಕರೆದುಕೊಂಡು ಹೋದರು. ವಿಧವೆಯರು ಅವನ ಸುತ್ತಲೂ ನಿಂತುಕೊಂಡು ದೊರ್ಕಳು ಜೀವದಿಂದ ಇದ್ದಾಗ ಆಕೆ ಸಿದ್ಧಪಡಿಸಿದ ನಿಲುವಂಗಿಗಳನ್ನು ಇತರ ಬಟ್ಟೆಗಳನ್ನು ಅವನಿಗೆ ತೋರಿಸುತ್ತಾ ಕಣ್ಣೀರಿಟ್ಟರು.</verse>
				<verse number="40">ಪೇತ್ರನು ಅವರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಮೃತ ಸ್ತ್ರೀಯ ಕಡೆಗೆ ತಿರುಗಿಕೊಂಡು, “ತಬಿಥಾ, ಏಳು,” ಎಂದು ಹೇಳಿದನು. ಆಕೆ ತನ್ನ ಕಣ್ಣು ತೆರೆದು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.</verse>
				<verse number="41">ಪೇತ್ರನು ಆಕೆಯ ಕೈಯನ್ನು ಹಿಡಿದು ಆಕೆ ಎದ್ದು ನಿಂತುಕೊಳ್ಳುವಂತೆ ಮಾಡಿದನು. ಅನಂತರ ದೇವಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ಆಕೆಯನ್ನು ಅವರಿಗೆ ಒಪ್ಪಿಸಿಕೊಟ್ಟನು.</verse>
				<verse number="42">ಈ ವಿಷಯ ಯೊಪ್ಪದಲ್ಲಿದ್ದವರೆಲ್ಲರಿಗೂ ತಿಳಿಯಿತು. ಕರ್ತ ಯೇಸುವಿನಲ್ಲಿ ಅನೇಕರು ವಿಶ್ವಾಸವನ್ನಿಟ್ಟರು.</verse>
				<verse number="43">ಪೇತ್ರನು ಯೊಪ್ಪದಲ್ಲಿ ಸೀಮೋನ ಎಂಬ ಹೆಸರಿನ ಚರ್ಮಕಾರನೊಂದಿಗೆ ಕೆಲವು ದಿನ ಇದ್ದನು.</verse>
			</chapter>
			<chapter number="10">
				<verse number="1">ಕೈಸರೈಯದಲ್ಲಿ ಕೊರ್ನೇಲ್ಯ ಎಂಬುವನಿದ್ದನು. “ಇಟಲಿಯ ದಳ” ಎಂದು ಹೆಸರಿನ ದಳಕ್ಕೆ ಅವನು ಶತಾಧಿಪತಿ.</verse>
				<verse number="2">ಅವನೂ ಅವನ ಕುಟುಂಬದವರು ಭಕ್ತಿವಂತರೂ ದೇವರಿಗೆ ಭಯಪಡುವವರೂ ಆಗಿದ್ದರು. ಅವನು ಕೊರತೆಯಲ್ಲಿರುವವರಿಗೆ ಧಾರಾಳವಾಗಿ ಕೊಡುತ್ತಿದ್ದನು. ಅವನು ಅನುದಿನವೂ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದನು.</verse>
				<verse number="3">ಒಂದು ದಿನ ಮಧ್ಯಾಹ್ನ ಸುಮಾರು ಮೂರು ಗಂಟೆಯ ಸಮಯ ಅವನಿಗೆ ಒಂದು ದರ್ಶನವಾಯಿತು. ತನ್ನ ಬಳಿಗೆ ಒಬ್ಬ ದೇವದೂತನು ಬಂದು, “ಕೊರ್ನೇಲ್ಯನೇ!” ಎಂದು ಕರೆಯುವ ದೇವದೂತನನ್ನು ಸ್ಪಷ್ಟವಾಗಿ ಕಂಡನು.</verse>
				<verse number="4">ಕೊರ್ನೇಲ್ಯನು ಭಯದಿಂದ ದೇವದೂತನನ್ನೇ ದೃಷ್ಟಿಸಿ ನೋಡಿ, “ಏನು ಸ್ವಾಮೀ?” ಎಂದು ಕೇಳಲು, “ನಿನ್ನ ಪ್ರಾರ್ಥನೆಗಳು, ಬಡವರಿಗೆ ನೀನು ಕೊಟ್ಟ ದಾನಗಳು ದೇವರ ಸನ್ನಿಧಿಗೆ ಜ್ಞಾಪಕಾರ್ಥ ಅರ್ಪಣೆಗಳಾಗಿ ಬಂದಿವೆ.</verse>
				<verse number="5">ಈಗ ನೀನು ಯೊಪ್ಪಕ್ಕೆ ಜನರನ್ನು ಕಳುಹಿಸಿ, ಪೇತ್ರ ಎಂದು ಕರೆಯಲಾಗುವ ಸೀಮೋನನನ್ನು ಇಲ್ಲಿಗೆ ಕರೆದುಕೊಂಡು ಬರಲು ಹೇಳು.</verse>
				<verse number="6">ಚರ್ಮಕಾರನಾದ ಸೀಮೋನನ ಮನೆಯಲ್ಲಿ ಅವನು ಇಳಿದುಕೊಂಡಿದ್ದಾನೆ. ಆ ಮನೆ ಸಮುದ್ರ ತೀರದಲ್ಲಿದೆ,” ಎಂದು ದೇವದೂತನು ಹೇಳಿದನು.</verse>
				<verse number="7">ತನ್ನೊಂದಿಗೆ ಮಾತನಾಡಿದ ದೇವದೂತನು ಅದೃಶ್ಯವಾದ ಮೇಲೆ ಕೊರ್ನೇಲ್ಯನು ತನ್ನ ಇಬ್ಬರು ಸೇವಕರನ್ನು ಮತ್ತು ತನ್ನ ಪರಿಚಾರಕರಲ್ಲಿ ಭಕ್ತಿವಂತನಾದ ಒಬ್ಬ ಸಿಪಾಯಿಯನ್ನು ಕರೆದು,</verse>
				<verse number="8">ಸಂಭವಿಸಿದ್ದೆಲ್ಲವನ್ನು ಅವರಿಗೆ ವಿವರಿಸಿ, ಅವರನ್ನು ಯೊಪ್ಪಕ್ಕೆ ಕಳುಹಿಸಿದನು.</verse>
				<verse number="9">ಮಾರನೆಯ ದಿನ ಅವರು ಪ್ರಯಾಣಮಾಡಿ ಮಧ್ಯಾಹ್ನದ ಸಮಯ ಯೊಪ್ಪ ಪಟ್ಟಣವನ್ನು ಸಮೀಪಿಸುತ್ತಿದ್ದಾಗ, ಆಗತಾನೇ ಪೇತ್ರನು ಪ್ರಾರ್ಥಿಸಲು ಮಾಳಿಗೆಯ ಮೇಲಕ್ಕೆ ಹೋದನು.</verse>
				<verse number="10">ಅವನಿಗೆ ಹಸಿವಾಗಿ ಏನನ್ನಾದರೂ ತಿನ್ನಬೇಕೆನಿಸಿತು. ಊಟ ಸಿದ್ಧತೆಯಾಗುತ್ತಿದ್ದಾಗ ಅವನು ಧ್ಯಾನ ಪರವಶನಾದನು.</verse>
				<verse number="11">ಪರಲೋಕವು ತೆರೆಯಲಾಗಿ ನಾಲ್ಕು ಮೂಲೆಗಳನ್ನು ಹಿಡಿದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಭೂಮಿಯ ಮೇಲೆ ಇಳಿಯುವದನ್ನು ಕಂಡನು.</verse>
				<verse number="12">ಎಲ್ಲಾ ಜಾತಿಯ ನಾಲ್ಕು ಕಾಲಿನ ಪ್ರಾಣಿಗಳು, ಭೂಮಿಯ ಮೇಲೆ ಹರಿದಾಡುವ ಸರೀಸೃಪಗಳು, ಹಾರಾಡುವ ಪಕ್ಷಿಗಳು ಅದರಲ್ಲಿದ್ದವು.</verse>
				<verse number="13">ಆಗ, “ಪೇತ್ರನೇ, ಎದ್ದೇಳು, ಕೊಂದು ತಿನ್ನು,” ಎಂಬ ವಾಣಿ ಅವನಿಗೆ ಕೇಳಿಸಿತು.</verse>
				<verse number="14">ಆದರೆ ಪೇತ್ರನು, “ಸ್ವಾಮಿ, ನನ್ನಿಂದಾಗದು! ಅಶುದ್ಧವಾದದ್ದನ್ನೂ ನಿಷಿದ್ಧವಾದದ್ದನ್ನೂ ನಾನೆಂದೂ ತಿಂದವನಲ್ಲ,” ಎಂದನು.</verse>
				<verse number="15">ವಾಣಿಯು ಎರಡನೆಯ ಬಾರಿಗೆ, “ದೇವರು ಶುದ್ಧೀಕರಿಸಿದ ಯಾವುದನ್ನೂ ಅಶುದ್ಧವೆನ್ನಬೇಡ,” ಎಂದಿತು.</verse>
				<verse number="16">ಹೀಗೆ ಮೂರು ಸಾರಿ ನಡೆದಮೇಲೆ, ಕೂಡಲೇ ಆ ಜೋಳಿಗೆಯನ್ನು ಪರಲೋಕಕ್ಕೆ ಎತ್ತಿಕೊಳ್ಳಲಾಯಿತು.</verse>
				<verse number="17">ಈ ದರ್ಶನದ ಅರ್ಥವೇನೆಂದು ಪೇತ್ರನು ಯೋಚಿಸುತ್ತಿರಲು, ಇಗೋ, ಕೊರ್ನೇಲ್ಯನು ಕಳುಹಿಸಿದ ಜನರು ಸೀಮೋನನ ಮನೆಯನ್ನು ಕಂಡುಕೊಂಡು ಅಲ್ಲಿ ದ್ವಾರದ ಬಳಿಯಲ್ಲಿ ನಿಂತಿದ್ದರು.</verse>
				<verse number="18">ಅವರು ಪೇತ್ರನು ಎಂದು ಕರೆಯಲಾಗುವ ಸೀಮೋನ ಅಲ್ಲಿ ಇಳಿದುಕೊಂಡಿರುವನೋ ಎಂದು ವಿಚಾರಿಸಿದರು.</verse>
				<verse number="19">ಪೇತ್ರನು ಇನ್ನೂ ಆ ದರ್ಶನದ ಬಗ್ಗೆ ಯೋಚಿಸುತ್ತಿರಲು, ಪವಿತ್ರಾತ್ಮ ದೇವರು ಅವನಿಗೆ, “ಸೀಮೋನನೇ ಇಗೋ, ಮೂವರು ನಿನ್ನನ್ನು ಹುಡುಕುತ್ತಾ ಬಂದಿದ್ದಾರೆ.</verse>
				<verse number="20">ಎದ್ದೇಳು, ಕೆಳಗಿಳಿದು ಹೋಗು. ಅವರ ಜೊತೆಯಲ್ಲಿ ಹೋಗಲು ಹಿಂಜರಿಯಬೇಡ, ನಾನೇ ಅವರನ್ನು ಕಳುಹಿಸಿರುವೆ,” ಎಂದರು.</verse>
				<verse number="21">ಪೇತ್ರನು ಕೆಳಗಿಳಿದು ಹೋಗಿ, ಅವರಿಗೆ, “ನೀವು ಹುಡುಕುತ್ತಿರುವವನು ನಾನೇ. ನೀವು ಬಂದಿರುವ ಕಾರಣವೇನು?” ಎಂದು ಕೇಳಿದನು.</verse>
				<verse number="22">ಅವರು, “ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನು, ದೇವರಿಗೆ ಭಯಪಡುವವನು, ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನೀನು ಹೇಳುವಂಥದ್ದನ್ನು ಕೇಳಲಿಕ್ಕಾಗಿ ನಿನ್ನನ್ನು ಅಲ್ಲಿಗೆ ಕರೆಯಿಸಬೇಕೆಂದು ಒಬ್ಬ ಪರಿಶುದ್ಧ ದೇವದೂತನಿಂದ ಆದೇಶಪಡೆದಿದ್ದಾನೆ,” ಎಂದರು.</verse>
				<verse number="23">ಪೇತ್ರನು ಅವರನ್ನು ತನ್ನ ಅತಿಥಿಗಳಾಗಿರಲು ಮನೆಯೊಳಗೆ ಕರೆದನು. ಮರುದಿನ ಪೇತ್ರನು ಅವರೊಂದಿಗೆ ಪ್ರಯಾಣ ಬೆಳೆಸಿದನು. ಯೊಪ್ಪದಲ್ಲಿಯ ಕೆಲವು ಸಹೋದರರು ಅವನೊಂದಿಗೆ ಹೊರಟರು.</verse>
				<verse number="24">ಮರುದಿನ ಅವನು ಕೈಸರೈಯವನ್ನು ತಲುಪಿದನು ಮತ್ತು ಕೊರ್ನೇಲ್ಯನು ಅವರಿಗಾಗಿ ಕಾಯುತ್ತಿದ್ದನು. ತನ್ನ ಬಂಧುಗಳನ್ನು ಹತ್ತಿರದ ಸ್ನೇಹಿತರನ್ನು ಕರೆಯಿಸಿದ್ದನು.</verse>
				<verse number="25">ಆಗ ಪೇತ್ರನು ಮನೆಯಲ್ಲಿ ಪ್ರವೇಶಿಸುತ್ತಿದ್ದಂತೆ ಕೊರ್ನೇಲ್ಯನು ಅವನನ್ನು ಎದುರುಗೊಂಡು ಅವನ ಮುಂದೆ ಪಾದಕ್ಕೆರಗಿ ಸಾಷ್ಟಾಂಗ ನಮಸ್ಕಾರಮಾಡಿದನು.</verse>
				<verse number="26">ಆದರೆ ಪೇತ್ರನು ಅವನನ್ನು ಮೇಲಕ್ಕೆಬ್ಬಿಸಿ, “ಎದ್ದೇಳು, ನಾನೂ ಒಬ್ಬ ಮನುಷ್ಯನೇ,” ಎಂದು ಹೇಳಿದನು.</verse>
				<verse number="27">ಅವನೊಂದಿಗೆ ಮಾತನಾಡುತ್ತಾ ಪೇತ್ರನು ಮನೆಯೊಳಗೆ ಹೋಗಿ ಅಲ್ಲಿ ಜನರ ದೊಡ್ಡ ಗುಂಪೇ ಇರುವುದನ್ನು ಕಂಡನು.</verse>
				<verse number="28">ಪೇತ್ರನು ಅವರಿಗೆ: “ಯೆಹೂದ್ಯನು ಯೆಹೂದ್ಯರಲ್ಲದವರೊಂದಿಗೆ ಸೇರಿ, ಅವರನ್ನು ಭೇಟಿ ಮಾಡುವುದಾಗಲಿ ನಮ್ಮ ಯೆಹೂದಿ ನಿಯಮಕ್ಕೆ ವಿರೋಧವಾದದ್ದು ಎಂದು ನಿಮಗೆಲ್ಲರಿರೂ ತಿಳಿದೇ ಇದೆ. ಆದರೆ ಯಾವ ಮನುಷ್ಯನನ್ನೂ ಅಶುದ್ಧನು ಇಲ್ಲವೆ ನಿಷಿದ್ಧವಾದವನು ಎಂದು ಕರೆಯಬಾರದು ಎಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.</verse>
				<verse number="29">ಆದ್ದರಿಂದ ನನ್ನನ್ನು ಕರೆಕಳುಹಿಸಿದಾಗ ಯಾವ ಆಕ್ಷೇಪಣೆ ಮಾಡದೆ ಇಲ್ಲಿಗೆ ಬಂದಿದ್ದೇನೆ. ನನ್ನನ್ನು ಕರೆಕಳುಹಿಸಿದ ಕಾರಣವನ್ನು ಈಗ ನಾನು ತಿಳಿಯಬಹುದೋ?” ಎಂದನು.</verse>
				<verse number="30">ಆಗ ಕೊರ್ನೇಲ್ಯನು, “ನಾಲ್ಕು ದಿನಗಳ ಹಿಂದೆ ಈ ಸಮಯದಲ್ಲಿ ಅಂದರೆ, ಮಧ್ಯಾಹ್ನ ಮೂರು ಗಂಟೆಯ ಸಮಯದಲ್ಲಿ ನಾನು ನನ್ನ ಮನೆಯಲ್ಲಿದ್ದುಕೊಂಡು ಪ್ರಾರ್ಥನೆ ಮಾಡುತ್ತಿದ್ದೆನು. ಆಗ ಫಕ್ಕನೆ ಹೊಳೆಯುತ್ತಿರುವ ವಸ್ತ್ರ ಧರಿಸಿದ್ದ ಒಬ್ಬನು ನನ್ನೆದುರು ಬಂದು ನಿಂತುಕೊಂಡನು.</verse>
				<verse number="31">ಅವನು ನನಗೆ, ‘ಕೊರ್ನೇಲ್ಯನೇ, ದೇವರು ನಿನ್ನ ಪ್ರಾರ್ಥನೆ ಕೇಳಿದ್ದಾರೆ. ಬಡವರಿಗೆ ಕೊಟ್ಟ ನಿನ್ನ ದಾನಗಳನ್ನು ಜ್ಞಾಪಿಸಿಕೊಂಡಿದ್ದಾರೆ.</verse>
				<verse number="32">ಪೇತ್ರನೆಂದು ಹೆಸರಿನ ಸೀಮೋನನನ್ನು ಕರೆದುಕೊಂಡು ಬರಲು ಯೊಪ್ಪಕ್ಕೆ ಕೆಲವರನ್ನು ಕಳುಹಿಸು. ಪೇತ್ರನು ಸಮುದ್ರ ತೀರದಲ್ಲಿರುವ ಚರ್ಮಕಾರನಾದ ಸೀಮೋನನ ಮನೆಯಲ್ಲಿ ಇಳಿದುಕೊಂಡಿದ್ದಾನೆ,’ ಎಂದು ಹೇಳಿದನು.</verse>
				<verse number="33">ಆದ್ದರಿಂದ ನಾನು ನಿನ್ನನ್ನು ಕೂಡಲೇ ಕರೆದುಕೊಂಡು ಬರಲು ಕೆಲವರನ್ನು ಕಳುಹಿಸಿದೆ. ನೀನು ಬಂದಿರುವುದು ಒಳ್ಳೆಯದೇ ಆಯಿತು. ಕರ್ತ ಯೇಸು ನಮಗೆ ಏನು ಹೇಳಬೇಕೆಂದು ನಿನಗೆ ಆಜ್ಞಾಪಿಸಿರುವರೋ ಅದೆಲ್ಲವನ್ನು ಕೇಳಲು ಈಗ ನಾವು ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.</verse>
				<verse number="34">ಆಗ ಪೇತ್ರನು ಮಾತನಾಡಲು ಪ್ರಾರಂಭಿಸಿ: “ದೇವರು ಪಕ್ಷಪಾತಿಯಲ್ಲವೆಂದು ಈಗ ನನಗೆ ಮನದಟ್ಟಾಗಿದೆ.</verse>
				<verse number="35">ದೇವರು ಪ್ರತಿಯೊಂದು ದೇಶದಲ್ಲಿಯೂ ತಮಗೆ ಭಯಪಡುವ ಮತ್ತು ಸರಿಯಾದದ್ದನ್ನು ಮಾಡುವ ಜನರನ್ನು ಸ್ವೀಕರಿಸುತ್ತಾರೆ.</verse>
				<verse number="36">ಸರ್ವಸೃಷ್ಟಿಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಸಮಾಧಾನದ ಶುಭಸಮಾಚಾರ ಹೇಳುತ್ತಾ, ಇಸ್ರಾಯೇಲ್ ಜನರಿಗೆ ದೇವರು ಕಳುಹಿಸಿದ ವಾಕ್ಯವನ್ನು ನೀವು ತಿಳಿದಿದ್ದೀರಿ.</verse>
				<verse number="37">ಯೋಹಾನನು ದೀಕ್ಷಾಸ್ನಾನದ ಬಗ್ಗೆ ಬೋಧಿಸಿದ ನಂತರ ಗಲಿಲಾಯದಲ್ಲಿ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಏನು ಸಂಭವಿಸಿತೆಂಬುದನ್ನೂ ನೀವು ತಿಳಿದಿದ್ದೀರಿ.</verse>
				<verse number="38">ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮರಿಂದಲೂ ಶಕ್ತಿಯಿಂದಲೂ ಅಭಿಷೇಕಿಸಿದ್ದರು. ಮಾತ್ರವಲ್ಲದೆ, ದೇವರು ಯೇಸುವಿನೊಡನೆ ಇದ್ದುದರಿಂದ, ಅವರು ಬೇರೆ ಬೇರೆ ಕಡೆಗಳಿಗೆ ಹೋಗಿ ಒಳಿತನ್ನು ಮಾಡಿ, ಪಿಶಾಚನಿಂದ ಪೀಡಿತರಾದವರನ್ನು ಗುಣಪಡಿಸುತ್ತಾ ಸಂಚರಿಸಿದ್ದನ್ನು ನೀವು ಬಲ್ಲಿರಿ.</verse>
				<verse number="39">“ಯೆಹೂದ್ಯರ ನಾಡಿನಲ್ಲಿ ಮತ್ತು ಯೆರೂಸಲೇಮ ಪಟ್ಟಣದಲ್ಲಿಯೂ ಯೇಸು ಮಾಡಿದ ಪ್ರತಿಯೊಂದಕ್ಕೂ ನಾವು ಸಾಕ್ಷಿಗಳು. ಮರದ ಕಂಬಕ್ಕೆ ತೂಗುಹಾಕಿ ಯೇಸುವನ್ನು ನಾಯಕರು ಕೊಂದುಹಾಕಿದರು,</verse>
				<verse number="40">ಆದರೆ ಮೂರನೆಯ ದಿನದಲ್ಲಿ ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಏಳುವಂತೆ ಮತ್ತು ಕಾಣಿಸಿಕೊಳ್ಳುವಂತೆ ಮಾಡಿದರು.</verse>
				<verse number="41">ಯೇಸುವನ್ನು ಎಲ್ಲರೂ ನೋಡಲಿಲ್ಲ. ಆದರೆ ದೇವರು ಮೊದಲೇ ನೇಮಿಸಿಕೊಂಡ ಸಾಕ್ಷಿಗಳಾಗಿರುವ ನಮಗೆ ಕಾಣಿಸಿಕೊಂಡರು. ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದು ಬಂದ ತರುವಾಯ ಅವರೊಡನೆ ಊಟ, ಪಾನಮಾಡಿದ ನಮಗೆ ಕಾಣಿಸಿಕೊಂಡರು.</verse>
				<verse number="42">ಜೀವಿಸುವವರಿಗೂ ಸತ್ತವರಿಗೂ ನ್ಯಾಯಾಧೀಶರಾಗಿ ದೇವರಿಂದ ನೇಮಕವಾದವರು ಯೇಸುವೇ ಎಂದು ನಾವು ಜನರಿಗೆ ಬೋಧಿಸಿ ಸಾಕ್ಷಿ ಕೊಡಬೇಕೆಂದೂ ಕ್ರಿಸ್ತ ಯೇಸು ನಮಗೆ ಆಜ್ಞಾಪಿಸಿದ್ದಾರೆ.</verse>
				<verse number="43">ಯೇಸುವಿನಲ್ಲಿ ನಂಬಿಕೆಯನ್ನಿಡುವ ಪ್ರತಿಯೊಬ್ಬನು ಅವರ ಹೆಸರಿನ ಮುಖಾಂತರ ಪಾಪಗಳ ಕ್ಷಮಾಪಣೆ ಹೊಂದುವನು ಎಂದು ಅವರ ಬಗ್ಗೆ ಎಲ್ಲಾ ಪ್ರವಾದಿಗಳು ಸಾಕ್ಷಿಕೊಟ್ಟಿದ್ದಾರೆ,” ಎಂದನು.</verse>
				<verse number="44">ಪೇತ್ರನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ, ಆ ಸಂದೇಶವನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮ ದೇವರು ಇಳಿದು ಬಂದರು.</verse>
				<verse number="45">ಯೆಹೂದ್ಯರಲ್ಲದವರ ಮೇಲೆಯೂ ಪವಿತ್ರಾತ್ಮ ದೇವರು ವರವನ್ನು ಸುರಿಸಿದ್ದಕ್ಕೆ ಪೇತ್ರನೊಂದಿಗೆ ಸುನ್ನತಿಯಾದ ವಿಶ್ವಾಸಿಗಳು ಅತ್ಯಾಶ್ಚರ್ಯಪಟ್ಟರು.</verse>
				<verse number="46">ಏಕೆಂದರೆ ಅವರು ಅನ್ಯಭಾಷೆಗಳಲ್ಲಿ ಮಾತನಾಡುತ್ತಾ ದೇವರನ್ನು ಕೊಂಡಾಡುತ್ತಿದ್ದುದನ್ನು ಅವರು ಕೇಳಿಸಿಕೊಂಡರು, ಆಗ ಪೇತ್ರನು,</verse>
				<verse number="47">“ನೀರಿನಿಂದ ದೀಕ್ಷಾಸ್ನಾನವನ್ನು ಹೊಂದದಂತೆ ಯಾರಾದರೂ ಅಡ್ಡಿಮಾಡುವವರಿದ್ದಾರೋ? ನಾವು ಹೊಂದಿದಂತೆಯೇ ಇವರು ಸಹ ಪವಿತ್ರಾತ್ಮ ದೇವರನ್ನು ಹೊಂದಿಕೊಂಡಿದ್ದಾರಲ್ಲಾ?” ಎಂದು ಹೇಳಿದನು.</verse>
				<verse number="48">ಆಗ ಅವರು ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಹೊಂದುವಂತೆ ಆಜ್ಞಾಪಿಸಿದನು. ಅನಂತರ ಕೆಲವು ದಿನ ಅಲ್ಲಿಯೇ ಇರಬೇಕೆಂದು ಅವರು ಪೇತ್ರನನ್ನು ಕೇಳಿಕೊಂಡರು.</verse>
			</chapter>
			<chapter number="11">
				<verse number="1">ಯೆಹೂದ್ಯರಲ್ಲದವರು ಸಹ ದೇವರ ವಾಕ್ಯವನ್ನು ಸ್ವೀಕರಿಸಿದರೆಂಬ ವಾರ್ತೆಯನ್ನು ಅಪೊಸ್ತಲರೂ ಯೂದಾಯದಲ್ಲೆಲ್ಲಾ ಇದ್ದ ಸಹೋದರರೂ ಕೇಳಿದರು.</verse>
				<verse number="2">ಆದ್ದರಿಂದ ಪೇತ್ರನು ಯೆರೂಸಲೇಮಿಗೆ ಹೋದಾಗ ಸುನ್ನತಿಯಾದವರು ಅವನೊಂದಿಗೆ ವಾಗ್ವಾದಮಾಡಿ,</verse>
				<verse number="3">“ಸುನ್ನತಿ ಇಲ್ಲದವರ ಮನೆಯೊಳಗೆ ಹೋಗಿ ಅವರೊಂದಿಗೆ ಊಟಮಾಡಿದೆ,” ಎಂದರು.</verse>
				<verse number="4">ಆಗ ಸಂಭವಿಸಿದ್ದೆಲ್ಲವನ್ನು ಪೇತ್ರನು ಕ್ರಮವಾಗಿ ವಿವರಿಸಿ:</verse>
				<verse number="5">“ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿದ್ದೆನು. ಆಗ ನಾನು ಧ್ಯಾನಪರವಶನಾಗಿ ಒಂದು ದರ್ಶನವನ್ನು ಕಂಡೆನು. ನಾಲ್ಕು ಮೂಲೆಗಳನ್ನು ಹಿಡಿದ ದೊಡ್ಡ ಜೋಳಿಗೆಯಂತಿರುವ ಒಂದು ವಸ್ತುವು ಪರಲೋಕದಿಂದ ಕೆಳಗೆ ಇಳಿದು ನಾನಿದ್ದಲ್ಲಿಗೆ ಬರುವುದನ್ನು ಕಂಡೆನು.</verse>
				<verse number="6">ನಾನು ಅದರೊಳಗೆ ನೋಡಲು ಅದರಲ್ಲಿ ಭೂಲೋಕದ ಮೇಲೆ ತಿರುಗಾಡುವ ಪ್ರಾಣಿಗಳೂ ಕಾಡು ಮೃಗಗಳೂ ಕ್ರಿಮಿಕೀಟಗಳೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳೂ ಇದ್ದುದನ್ನು ಕಂಡೆನು.</verse>
				<verse number="7">ಮಾತ್ರವಲ್ಲದೆ, ‘ಪೇತ್ರನೇ ಎದ್ದೇಳು, ಕೊಂದು ತಿನ್ನು,’ ಎಂದು ನನಗೆ ಹೇಳುವ ಒಂದು ವಾಣಿಯನ್ನು ಕೇಳಿಸಿಕೊಂಡೆನು.</verse>
				<verse number="8">“ಅದಕ್ಕೆ ನಾನು, ‘ಸ್ವಾಮಿ, ನನ್ನಿಂದಾಗದು! ಅಶುದ್ಧವಾದದ್ದನ್ನೂ ನಿಷಿದ್ಧವಾದದ್ದನ್ನೂ ನಾನೆಂದೂ ತಿಂದವನಲ್ಲ,’ ಎಂದು ಉತ್ತರಕೊಟ್ಟೆನು.</verse>
				<verse number="9">“ಆಗ ಪರಲೋಕದ ಆ ವಾಣಿಯು, ‘ದೇವರು ಶುದ್ಧೀಕರಿಸಿದ ಯಾವುದನ್ನೂ ಅಶುದ್ಧವೆನ್ನಬೇಡ,’ ಎಂದು ಎರಡನೆಯ ಸಾರಿ ನನಗೆ ಹೇಳಿತು.</verse>
				<verse number="10">ಹೀಗೆ ಮೂರು ಬಾರಿಯಾದ ತರುವಾಯ ಅವೆಲ್ಲವನ್ನೂ ಪರಲೋಕಕ್ಕೆ ಹಿಂದಿರುಗಿ ತೆಗೆದುಕೊಳ್ಳಲಾಯಿತು.</verse>
				<verse number="11">“ಆ ಸಮಯಕ್ಕೆ ಸರಿಯಾಗಿ ಕೈಸರೈಯದಿಂದ ನನ್ನ ಬಳಿಗೆ ಕಳುಹಿಸಲಾದ ಮೂರು ಜನರು ನಾನು ಉಳಿದುಕೊಂಡಿದ್ದ ಮನೆಯ ಮುಂದೆ ಬಂದು ನಿಂತರು.</verse>
				<verse number="12">ಏನೂ ಸಂಶಯಪಡದೇ ಅವರ ಜೊತೆಯಲ್ಲಿ ಹೋಗಬೇಕೆಂದು ಪವಿತ್ರಾತ್ಮ ದೇವರು ನನಗೆ ಅಪ್ಪಣೆಕೊಟ್ಟರು. ಇದಲ್ಲದೆ ಈ ಆರು ಜನ ಸಹೋದರರೂ ನನ್ನೊಂದಿಗೆ ಹೊರಟರು. ನಾವು ಆ ಮನುಷ್ಯನ ಮನೆಯೊಳಗೆ ಪ್ರವೇಶಿಸಿದೆವು.</verse>
				<verse number="13">ತನ್ನ ಮನೆಯಲ್ಲಿ ಒಬ್ಬ ದೇವದೂತನು ಪ್ರತ್ಯಕ್ಷನಾಗಿ, ‘ಪೇತ್ರ ಎಂದು ಕರೆಯಲಾಗುವ ಸೀಮೋನನನ್ನು ಯೊಪ್ಪದಿಂದ ಕರೆಕಳುಹಿಸು.</verse>
				<verse number="14">ಅವನು ಕೊಡುವ ವಾಕ್ಯದ ಮೂಲಕ ನೀನೂ ನಿನ್ನ ಮನೆಯಲ್ಲಿರುವವರೆಲ್ಲರೂ ರಕ್ಷಣೆ ಹೊಂದುವಿರಿ,’ ಎಂದು ಹೇಳಿದ್ದನ್ನು ಅವನು ನಮಗೆ ವಿವರಿಸಿದನು.</verse>
				<verse number="15">“ನಾನು ಮಾತನಾಡಲು ಪ್ರಾರಂಭ ಮಾಡಿದಾಗ, ಪವಿತ್ರಾತ್ಮ ದೇವರು ಮೊದಲು ನಮ್ಮ ಮೇಲೆ ಇಳಿದಂತೆಯೇ ಅವರ ಮೇಲೆಯೂ ಇಳಿದು ಬಂದರು.</verse>
				<verse number="16">‘ಯೋಹಾನನು ನೀರಿನಿಂದ ದೀಕ್ಷಾಸ್ನಾನ ಮಾಡಿಸಿದ್ದಾನೆ. ನೀವಾದರೋ ಪವಿತ್ರಾತ್ಮ ದೇವರಿಂದ ದೀಕ್ಷಾಸ್ನಾನ ಹೊಂದುವಿರಿ,’ ಎಂದು ಕರ್ತ ಯೇಸುವು ಹೇಳಿದ ಮಾತುಗಳನ್ನು ನಾನು ಆಗ ಜ್ಞಾಪಿಸಿಕೊಂಡೆನು.</verse>
				<verse number="17">ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ನಂಬಿಕೆಯನ್ನಿಟ್ಟ ನಮಗೆ ಕೊಟ್ಟ ಪವಿತ್ರಾತ್ಮ ವರವನ್ನೇ ದೇವರು ಅವರಿಗೂ ಕೊಟ್ಟಿರಲು, ದೇವರಿಗೆ ಅಡ್ಡಿಮಾಡಲು ನಾನು ಯಾರು?” ಎಂದನು.</verse>
				<verse number="18">ಯೆಹೂದಿ ವಿಶ್ವಾಸಿಗಳು ಇದನ್ನು ಕೇಳಿದಾಗ, ಅವರಿಗೆ ಯಾವ ಆಕ್ಷೇಪಣೆಯೂ ಇರಲಿಲ್ಲ. ಹಾಗಾದರೆ ದೇವರು, “ಯೆಹೂದ್ಯರಲ್ಲದವರಿಗೂ ಸಹ ಜೀವಕ್ಕಾಗಿ ಪಶ್ಚಾತ್ತಾಪವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ದೇವರನ್ನು ಕೊಂಡಾಡಿದರು.</verse>
				<verse number="19">ಸ್ತೆಫನನ ಮರಣದ ನಂತರ ಸಂಭವಿಸಿದ ಹಿಂಸೆಯ ನಿಮಿತ್ತ ಚದರಿಹೋದವರು ಫೊಯಿನಿಕೆ, ಸೈಪ್ರಸ್ ಮತ್ತು ಅಂತಿಯೋಕ್ಯದವರೆಗೆ ಪ್ರಯಾಣಮಾಡಿದರು. ಹೀಗೆ ಅವರು ಯೆಹೂದ್ಯರಿಗೆ ಮಾತ್ರವೇ ವಾಕ್ಯವನ್ನು ಸಾರಿದರು.</verse>
				<verse number="20">ಆದರೆ ಅವರಲ್ಲಿ, ಕೆಲವರು ಅಂದರೆ ಸೈಪ್ರಸ್ ಮತ್ತು ಕುರೇನೆದ ಪುರುಷರು ಅಂತಿಯೋಕ್ಯಕ್ಕೆ ಹೋಗಿ ಗ್ರೀಕರಿಗೂ ಕರ್ತ ಯೇಸುವಿನ ಶುಭಸಮಾಚಾರ ಸಾರಲು ಪ್ರಾರಂಭಿಸಿದರು.</verse>
				<verse number="21">ಕರ್ತ ಯೇಸುವಿನ ಹಸ್ತವು ಅವರೊಂದಿಗಿತ್ತು ಬಹಳಷ್ಟು ಜನರು ನಂಬಿ ಕರ್ತ ಯೇಸುವಿನ ಕಡೆಗೆ ತಿರುಗಿಕೊಂಡರು.</verse>
				<verse number="22">ಈ ಸಮಾಚಾರ ಯೆರೂಸಲೇಮಿನ ಸಭೆಯವರಿಗೆ ತಿಳಿಯಿತು. ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿಕೊಟ್ಟರು.</verse>
				<verse number="23">ಅವನು ಅಲ್ಲಿಗೆ ಬಂದು ದೇವರ ಕೃಪೆಯನ್ನು ಕಂಡು ಹರ್ಷಭರಿತನಾಗಿ, ಅವರೆಲ್ಲರೂ ಕರ್ತನಿಗೆ ಹೃದಯಪೂರ್ವಕವಾಗಿ ಭಯಭಕ್ತಿ ಉಳ್ಳವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸಿದನು.</verse>
				<verse number="24">ಬಾರ್ನಬನು ಸತ್ಪುರುಷನೂ ಪವಿತ್ರಾತ್ಮಭರಿತನೂ ಪೂರ್ಣನಂಬಿಕೆಯುಳ್ಳವನೂ ಆಗಿದ್ದನು. ಅಲ್ಲಿ ಅನೇಕರು ಕರ್ತ ಯೇಸುವಿನ ಕಡೆಗೆ ಬಂದರು.</verse>
				<verse number="25">ಅನಂತರ ಬಾರ್ನಬನು ಸೌಲನನ್ನು ಹುಡುಕುವುದಕ್ಕಾಗಿ ತಾರ್ಸಕ್ಕೆ ಹೋದನು.</verse>
				<verse number="26">ಅಲ್ಲಿ ಸೌಲನನ್ನು ಭೇಟಿಯಾಗಿ, ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅನಂತರ ಇಡೀ ಒಂದು ವರ್ಷಕಾಲ ಬಾರ್ನಬನು, ಸೌಲನು ಅಲ್ಲಿ ಸಭೆಯವರೊಂದಿಗೆ ಇದ್ದುಕೊಂಡು ಬಹಳ ಜನರಿಗೆ ಬೋಧನೆ ಮಾಡಿದರು. ಶಿಷ್ಯರಿಗೆ ಪ್ರಥಮ ಬಾರಿ “ಕ್ರೈಸ್ತರು” ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲಿಯೇ.</verse>
				<verse number="27">ಈ ಸಮಯದಲ್ಲಿ ಯೆರೂಸಲೇಮಿನಿಂದ ಕೆಲವು ಪ್ರವಾದಿಗಳು ಅಂತಿಯೋಕ್ಯಕ್ಕೆ ಬಂದರು.</verse>
				<verse number="28">ಅವರಲ್ಲೊಬ್ಬ ಅಗಬ ಎಂಬವನು ಪವಿತ್ರಾತ್ಮ ಪ್ರೇರಿತನಾಗಿ ಎದ್ದು ನಿಂತುಕೊಂಡು ಲೋಕಕ್ಕೆಲ್ಲಾ ಭೀಕರ ಕ್ಷಾಮ ಬರುವುದೆಂದು ತಿಳಿಸಿದನು. ಇದು ಕ್ಲೌದ್ಯನ ಆಳ್ವಿಕೆಯಲ್ಲಿ ಸಂಭವಿಸಿತು.</verse>
				<verse number="29">ಯೂದಾಯದಲ್ಲಿ ವಾಸಿಸುತ್ತಿದ್ದ ಸಹೋದರರಿಗೆ ಸಹಾಯ ಒದಗಿಸಲು ಅನುಕೂಲಸ್ಥರಾದ ಶಿಷ್ಯರು ತಮ್ಮ ಶಕ್ತ್ಯಾನುಸಾರ ಕೊಡಲು ನಿರ್ಧರಿಸಿದರು.</verse>
				<verse number="30">ಇದಕ್ಕನುಗುಣವಾಗಿ ಬಾರ್ನಬ ಮತ್ತು ಸೌಲರ ಮುಖಾಂತರ ಹಿರಿಯರಿಗೆ ತಮ್ಮ ದೇಣಿಗೆಗಳನ್ನು ಕಳುಹಿಸಿದರು.</verse>
			</chapter>
			<chapter number="12">
				<verse number="1">ಆ ದಿನಗಳಲ್ಲಿ ಅರಸನಾದ ಹೆರೋದನು ದೇವರ ಸಭೆಯ ಸದಸ್ಯರನ್ನು ಹಿಂಸಿಸುವ ಉದ್ದೇಶದಿಂದ ಕೆಲವರನ್ನು ಬಂಧಿಸಿದನು.</verse>
				<verse number="2">ಯೋಹಾನನ ಸಹೋದರ ಯಾಕೋಬನನ್ನು ಖಡ್ಗದಿಂದ ಕೊಲ್ಲಿಸಿದನು.</verse>
				<verse number="3">ಇದರಿಂದ ಯೆಹೂದ್ಯರಿಗೆ ಮೆಚ್ಚಿಕೆಯಾಯಿತೆಂದು ತಿಳಿದಾಗ, ಅವನು ಪೇತ್ರನನ್ನು ಬಂಧಿಸಿದನು. ಇದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಸಮಯದಲ್ಲಿ ನಡೆಯಿತು.</verse>
				<verse number="4">ಪೇತ್ರನನ್ನು ಬಂಧಿಸಿದ ನಂತರ ಅವನನ್ನು ಸೆರೆಮನೆಯಲ್ಲಿ ಹಾಕಿದನು. ಪೇತ್ರನನ್ನು ಕಾಯಲು ನಾಲ್ಕು ದಳಗಳನ್ನು ನೇಮಿಸಿದನು. ಒಂದೊಂದು ದಳದಲ್ಲಿಯೂ ನಾಲ್ಕು ಸಿಪಾಯಿಗಳಿದ್ದರು. ಪಸ್ಕಹಬ್ಬ ಮುಗಿದ ತರುವಾಯ ಪೇತ್ರನನ್ನು ಬಹಿರಂಗ ವಿಚಾರಣೆಗೆ ತರಬೇಕೆಂದು ಉದ್ದೇಶಿಸಿದ್ದನು.</verse>
				<verse number="5">ಹೀಗೆ ಪೇತ್ರನು ಸೆರೆಮನೆಯಲ್ಲಿ ಬಂಧಿಸಲಾಗಿದ್ದಾಗ, ದೇವರ ಸಭೆಯು ಅವನಿಗೋಸ್ಕರವಾಗಿ ಆಸಕ್ತಿಯಿಂದ ದೇವರಿಗೆ ಪ್ರಾರ್ಥಿಸುತ್ತಿತ್ತು.</verse>
				<verse number="6">ಹೆರೋದನು ಅವನನ್ನು ವಿಚಾರಣೆಗೆ ತರಲಿಕ್ಕಿದ್ದ ದಿನದ ಹಿಂದಿನ ರಾತ್ರಿ ಪೇತ್ರನು ಸರಪಣಿಗಳಿಂದ ಬಂಧಿಸಲಾಗಿ ಇಬ್ಬರು ಸಿಪಾಯಿಗಳ ಮಧ್ಯೆ ನಿದ್ರಿಸುತ್ತಿದ್ದನು. ಕಾವಲುಗಾರರು ದ್ವಾರದ ಬಳಿಯಲ್ಲಿ ಕಾಯುತ್ತಿದ್ದರು.</verse>
				<verse number="7">ಫಕ್ಕನೆ ದೇವದೂತನೊಬ್ಬನು ಪ್ರತ್ಯಕ್ಷನಾಗಲು ಕೋಣೆಯೆಲ್ಲಾ ಪ್ರಕಾಶಮಯವಾಯಿತು. ಅವನು ಪೇತ್ರನನ್ನು ತಟ್ಟಿ ಎಬ್ಬಿಸಿ, “ಬೇಗ ಎದ್ದೇಳು!” ಎಂದನು. ಪೇತ್ರನ ಕೈಗಳಿಗೆ ಬಂಧಿಸಿದ್ದ ಸರಪಣಿಗಳು ಕಳಚಿಬಿದ್ದವು.</verse>
				<verse number="8">“ನಿನ್ನ ಬಟ್ಟೆಗಳನ್ನೂ ಮೆಟ್ಟುಗಳನ್ನೂ ಧರಿಸಿಕೋ,” ಎಂದು ದೇವದೂತನು ಅವನಿಗೆ ಹೇಳಲು, ಪೇತ್ರನು ಅದರಂತೆ ಮಾಡಿದನು. “ನಿನ್ನ ನಿಲುವಂಗಿಯನ್ನು ಸುತ್ತಿಕೊಂಡು ನನ್ನನ್ನು ಹಿಂಬಾಲಿಸು,” ಎಂದು ದೇವದೂತನು ಹೇಳಿದನು.</verse>
				<verse number="9">ಪೇತ್ರನು ಸೆರೆಮನೆಯಿಂದ ಹೊರಗೆ ಅವನನ್ನು ಹಿಂಬಾಲಿಸಿ ಹೊರಟನು. ದೇವದೂತನು ಮಾಡುತ್ತಿರುವುದು ನಿಜವಾಗಿಯೂ ನಡೆಯುತ್ತಿದೆ ಎಂಬುದು ಅವನಿಗೆ ತಿಳಿಯಲಿಲ್ಲ. ತಾನು ದರ್ಶನ ಕಾಣುತ್ತಿರುವೆನೋ ಎಂದು ಭಾವಿಸಿದನು.</verse>
				<verse number="10">ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣದೊಳಗೆ ನಡೆಸುವ ಕಬ್ಬಿಣದ ದ್ವಾರಕ್ಕೆ ಅವರು ಬಂದರು. ಅದು ತನ್ನಷ್ಟಕ್ಕೆ ತಾನೇ ತೆರೆಯಲು ಅವರು ಅದನ್ನು ದಾಟಿ ಹೊರಗೆ ಬಂದರು. ಒಂದು ಬೀದಿಯನ್ನು ದಾಟುವವರೆಗೆ ನಡೆದು ಬಂದ ನಂತರ ಫಕ್ಕನೆ ದೇವದೂತನು ಪೇತ್ರನನ್ನು ಬಿಟ್ಟುಹೋದನು.</verse>
				<verse number="11">ಆಗ ಪೇತ್ರನು ಸಂಪೂರ್ಣವಾಗಿ ಎಚ್ಚರಗೊಂಡು, “ಈಗ ಕರ್ತದೇವರು ತಮ್ಮ ದೂತನನ್ನು ಕಳುಹಿಸಿ ಹೆರೋದನ ಹಿಡಿತದಿಂದಲೂ ಯೆಹೂದ್ಯ ಜನರು ನಿರೀಕ್ಷಿಸುತ್ತಿದ್ದ ಎಲ್ಲಾ ಕೇಡಿನಿಂದಲೂ ನನ್ನನ್ನು ಉಳಿಸಿ ಕಾಪಾಡಿರುವರು ಎಂದು ಈಗ ನನಗೆ ಗೊತ್ತಾಗಿದೆ,” ಎಂದುಕೊಂಡನು.</verse>
				<verse number="12">ಅವನು ಇದನ್ನು ಗ್ರಹಿಸಿ, ಮಾರ್ಕನೆನಿಸಿಕೊಳ್ಳುವ ಯೋಹಾನನ ತಾಯಿ ಮರಿಯಳ ಮನೆಗೆ ಹೋದನು. ಅಲ್ಲಿ ಅನೇಕರು ಒಟ್ಟಾಗಿ ಕೂಡಿಬಂದು ಪ್ರಾರ್ಥನೆ ಮಾಡುತ್ತಿದ್ದರು.</verse>
				<verse number="13">ಪೇತ್ರನು ಬಾಗಿಲನ್ನು ತಟ್ಟಿದಾಗ, ರೋದೆ ಎಂಬ ಸೇವಕಿ ಬಾಗಿಲು ತೆರೆಯಲು ಬಾಗಿಲ ಬಳಿಗೆ ಬಂದಳು.</verse>
				<verse number="14">ಪೇತ್ರನ ಧ್ವನಿಯನ್ನು ಗುರುತಿಸಿ ಸಂತೋಷದಿಂದ ಕೂಡಿದವಳಾಗಿ ಬಾಗಿಲು ತೆರೆಯದೆ ಹಿಂದೆ ಓಡಿಹೋಗಿ, “ಪೇತ್ರನು ಬಾಗಿಲ ಬಳಿಯಲ್ಲಿದ್ದಾನೆ!” ಎಂದು ತಿಳಿಸಿದಳು.</verse>
				<verse number="15">ಆದರೆ ಅವರು, “ನಿನಗೆ ಹುಚ್ಚುಹಿಡಿದಿದೆ,” ಎಂದರು. ತಾನು ಹೇಳುವುದು ನಿಜ ಎಂದು ಆಕೆ ಒತ್ತಿ ಹೇಳುತ್ತಿರಲು ಅವರು, “ಅದು ಅವನ ದೂತನೇ ಆಗಿರಬೇಕು,” ಎಂದರು.</verse>
				<verse number="16">ಆದರೆ ಪೇತ್ರನು ಬಾಗಿಲು ತಟ್ಟುತ್ತಲೇ ಇರಲು, ಅವರು ಹೋಗಿ ಬಾಗಿಲು ತೆರೆಯಲು ಅವನನ್ನು ಕಂಡು ಅತ್ಯಾಶ್ಚರ್ಯಗೊಂಡರು.</verse>
				<verse number="17">ಸುಮ್ಮನಿರಬೇಕೆಂದು ಪೇತ್ರನು ಅವರಿಗೆ ಕೈಸನ್ನೆ ಮಾಡಿ ಕರ್ತದೇವರು ಹೇಗೆ ತನ್ನನ್ನು ಸೆರೆಮನೆಯಿಂದ ಬಿಡಿಸಿ ಹೊರಗೆ ಕರೆದುಕೊಂಡು ಬಂದರು ಎಂಬುದನ್ನು ವಿವರಿಸಿದನು. “ಇದನ್ನು ಯಾಕೋಬನಿಗೆ ಹಾಗೂ ಸಹೋದರರಿಗೆ ತಿಳಿಸಿರಿ,” ಎಂದು ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.</verse>
				<verse number="18">ಬೆಳಗಾದ ಮೇಲೆ ಪೇತ್ರನಿಗೆ ಏನಾಯಿತೆಂದು ಸೈನಿಕರ ನಡುವೆ ಬಹಳಷ್ಟು ಗೊಂದಲವಿತ್ತು.</verse>
				<verse number="19">ಹೆರೋದನು ಅವನನ್ನು ಹುಡುಕಿ ಕಾಣದೆ ಹೋದದ್ದರಿಂದ ಕಾವಲುಗಾರರನ್ನು ವಿಚಾರಿಸಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಅನಂತರ ಹೆರೋದನು ಯೂದಾಯದಿಂದ ಕೈಸರೈಯಕ್ಕೆ ಹೋಗಿ ಅಲ್ಲಿ ಸ್ವಲ್ಪ ಸಮಯ ಇದ್ದನು.</verse>
				<verse number="20">ಅವನು ಟೈರ್ ಮತ್ತು ಸೀದೋನಿನ ಜನರೊಂದಿಗೆ ಬಹು ಕೋಪವುಳ್ಳವನಾಗಿದ್ದನು. ಈಗ ಅವರೆಲ್ಲರೂ ಒಂದಾಗಿ ಅವನ ಬಳಿ ಬಂದು ಅರಸನ ನಂಬಿಗಸ್ತ ಸೇವಕನಾದ ಬ್ಲಾಸ್ತ ಎಂಬುವನ ಬೆಂಬಲವನ್ನು ಪಡೆದುಕೊಂಡು, ಸಂಧಾನ ಮಾಡಿಕೊಳ್ಳಲು ಅರಸನನ್ನು ಕೇಳಿಕೊಂಡರು. ಏಕೆಂದರೆ ಅವರ ಆಹಾರ ಧಾನ್ಯಗಳು ಅರಸನ ಸೀಮೆಯಿಂದ ಬರುತ್ತಿದ್ದವು.</verse>
				<verse number="21">ನೇಮಕವಾದ ದಿನ ಹೆರೋದನು ತನ್ನ ರಾಜವಸ್ತ್ರಗಳನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತುಕೊಂಡು ಜನರನ್ನುದ್ದೇಶಿಸಿ ಬಹಿರಂಗ ಭಾಷಣ ಮಾಡಿದನು.</verse>
				<verse number="22">“ಇದು ಮಾನವ ಧ್ವನಿಯಲ್ಲ ದೇವರದೇ!” ಎಂದು ಜನರು ಆರ್ಭಟಿಸಿದರು.</verse>
				<verse number="23">ಹೆರೋದನು ದೇವರಿಗೆ ಸಲ್ಲಿಸಬೇಕಾದ ಮಹಿಮೆ ಸಲ್ಲಿಸದೇ ಹೋದದ್ದರಿಂದ ಕೂಡಲೇ ಒಬ್ಬ ದೇವದೂತನು ಅವನನ್ನು ಹೊಡೆಯಲು ಅವನು ಹುಳ ಬಿದ್ದು ಸತ್ತುಹೋದನು.</verse>
				<verse number="24">ದೇವರ ವಾಕ್ಯವಾದರೋ ವೃದ್ಧಿಯಾಗುತ್ತಾ ಪ್ರಸಾರಗೊಂಡಿತು.</verse>
				<verse number="25">ಬಾರ್ನಬ ಮತ್ತು ಸೌಲನು ತಮ್ಮ ಸೇವಾಕಾರ್ಯವನ್ನು ಮುಗಿಸಿ, ಮಾರ್ಕ ಎಂದು ಕರೆಯಲಾಗುತ್ತಿದ್ದ ಯೋಹಾನನನ್ನು ತಮ್ಮೊಂದಿಗೆ ಕರೆದುಕೊಂಡು ಯೆರೂಸಲೇಮಿನಿಂದ ಹೊರಟು ಹೋದರು.</verse>
			</chapter>
			<chapter number="13">
				<verse number="1">ಅಂತಿಯೋಕ್ಯದ ಸಭೆಯಲ್ಲಿ, ಪ್ರವಾದಿಗಳೂ ಬೋಧಕರೂ ಇದ್ದರು. ಅವರು ಯಾರೆಂದರೆ ಬಾರ್ನಬನು, ನೀಗರ ಎಂದು ಕರೆಯಲಾಗುತ್ತಿದ್ದ ಸಿಮೆಯೋನ, ಕುರೇನೆದ ಲೂಕ್ಯ, ಚತುರಾಧಿಪತಿ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಮುಂತಾದವರೇ.</verse>
				<verse number="2">ಇವರೆಲ್ಲರೂ ಕರ್ತದೇವರನ್ನು ಆರಾಧಿಸಿ, ಉಪವಾಸಮಾಡುತ್ತಿದ್ದರು. ಆಗ ಪವಿತ್ರಾತ್ಮ ದೇವರು, “ಬಾರ್ನಬನನ್ನೂ ಸೌಲನನ್ನೂ ನಾನು ಕರೆದಿರುವ ಕಾರ್ಯಕ್ಕಾಗಿ ಅವರನ್ನು ನನಗಾಗಿ ಪ್ರತ್ಯೇಕಿಸಿರಿ,” ಎಂದರು.</verse>
				<verse number="3">ಆಗ ಅವರು ಉಪವಾಸವಿದ್ದು ಪ್ರಾರ್ಥನೆಮಾಡಿ, ಅವರಿಬ್ಬರ ಮೇಲೆ ಕೈಗಳನ್ನಿಟ್ಟು ಕಳುಹಿಸಿಬಿಟ್ಟರು.</verse>
				<verse number="4">ಪವಿತ್ರಾತ್ಮ ದೇವರಿಂದ ಕಳುಹಿಸಲಾದ ಅವರಿಬ್ಬರೂ ಸೆಲ್ಯೂಕ್ಯಕ್ಕೆ ಹೋಗಿ ಅಲ್ಲಿಂದ ನೌಕೆಯಲ್ಲಿ ಪ್ರಯಾಣಮಾಡಿ ಸೈಪ್ರಸಿಗೆ ತಲುಪಿದರು.</verse>
				<verse number="5">ಸಲಮೀಸಿಗೆ ಬಂದು, ಅಲ್ಲಿಯ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೋಹಾನನು ಸಹ ಅವರೊಂದಿಗಿದ್ದು ಅವರಿಗೆ ಸಹಾಯಕನಾಗಿದ್ದನು.</verse>
				<verse number="6">ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣಮಾಡಿ ಪಾಫೋಸ್ ಎಂಬಲ್ಲಿಗೆ ಬಂದರು. ಅಲ್ಲಿ ಮಂತ್ರವಾದಿಯೂ ಸುಳ್ಳುಪ್ರವಾದಿಯೂ ಆಗಿದ್ದ “ಬಾರ್ ಯೇಸು” ಎಂಬ ಹೆಸರಿನ ಒಬ್ಬ ಯೆಹೂದ್ಯನನ್ನು ಕಂಡರು.</verse>
				<verse number="7">ಅವನು ರಾಜ್ಯಪಾಲ ಸೆರ್ಗ್ಯಪೌಲನ ಜೊತೆಗಿದ್ದನು. ಈ ರಾಜ್ಯಪಾಲನು ಬುದ್ಧಿವಂತನಾಗಿದ್ದನು. ಇವನು ದೇವರ ವಾಕ್ಯವನ್ನು ಕೇಳುವ ಉದ್ದೇಶದಿಂದ ಬಾರ್ನಬ ಮತ್ತು ಸೌಲರನ್ನು ಕರೆಕಳುಹಿಸಿದನು.</verse>
				<verse number="8">ಆದರೆ ಮಂತ್ರವಾದಿಯಾದ ಎಲುಮನು ಅವರನ್ನು ವಿರೋಧಿಸಿ ರಾಜ್ಯಪಾಲನು ವಿಶ್ವಾಸಿಯಾಗದಂತೆ ಅಡ್ಡಿಮಾಡಲು ಪ್ರಯತ್ನಿಸಿದನು. ಎಲುಮ ಎಂಬ ಹೆಸರಿಗೆ ಮಂತ್ರವಾದಿ ಎಂಬುದೇ ಅರ್ಥ.</verse>
				<verse number="9">ಆಗ ಪೌಲನೆಂದೂ ಕರೆಯಲಾಗುತ್ತಿದ್ದ ಸೌಲನು, ಪವಿತ್ರಾತ್ಮಭರಿತನಾಗಿ, ಎಲುಮನನ್ನು ನೇರವಾಗಿ ದೃಷ್ಟಿಸಿ,</verse>
				<verse number="10">“ಎಲೈ ಸೈತಾನನ ಮಗನೇ, ನೀತಿಗೆಲ್ಲಾ ವೈರಿಯೇ, ನಿನ್ನಲ್ಲಿ ಎಲ್ಲಾ ತರದ ಮೋಸವೂ ಕುತಂತ್ರವೂ ತುಂಬಿವೆ. ಕರ್ತದೇವರ ಸನ್ಮಾರ್ಗಗಳಿಗೆ ಅಡ್ಡಿಯಾಗುವುದನ್ನು ನೀನೆಂದೂ ನಿಲ್ಲಿಸುವುದಿಲ್ಲವೋ?</verse>
				<verse number="11">ಇಗೋ ಕರ್ತದೇವರ ಹಸ್ತ ನಿನಗೆ ವಿರೋಧವಾಗಿದೆ. ಈಗ ನೀನು ಕುರುಡನಾಗಿ, ಸ್ವಲ್ಪ ಕಾಲ ಸೂರ್ಯನ ಬೆಳಕನ್ನು ಕಾಣದೇ ಹೋಗುವೆ,” ಎಂದನು. ತಕ್ಷಣವೇ ಅವನ ಮೇಲೆ ಮಂಜು ಮುಸುಕಿ ಕತ್ತಲೆ ಆವರಿಸಿತು. ಅವನು ತಡವರಿಸುತ್ತಾ ತನ್ನನ್ನು ಯಾರಾದರೂ ಕೈಹಿಡಿದು ನಡೆಸುವರೋ ಎಂದು ಹುಡುಕಾಡಿದನು.</verse>
				<verse number="12">ಸಂಭವಿಸಿದ್ದೆಲ್ಲವನ್ನೂ ರಾಜ್ಯಪಾಲನು ಕಂಡು, ಕರ್ತ ಯೇಸುವಿನ ವಿಷಯವಾಗಿದ್ದ ಬೋಧನೆಯ ಬಗ್ಗೆ ಆಶ್ಚರ್ಯಪಟ್ಟು ವಿಶ್ವಾಸವನ್ನಿಟ್ಟನು.</verse>
				<verse number="13">ಪಾಫೋಸಿನಿಂದ, ಪೌಲ ಮತ್ತು ಅವನ ಸಂಗಡಿಗರು ಪಂಫುಲ್ಯಕ್ಕೆ ಸೇರಿದ ಪೆರ್ಗೆ ಎಂಬಲ್ಲಿಗೆ ನೌಕೆಯಲ್ಲಿ ಪ್ರಯಾಣಮಾಡಿದರು, ಅಲ್ಲಿ ಯೋಹಾನನು ಅವರನ್ನು ಬಿಟ್ಟು ಯೆರೂಸಲೇಮಿಗೆ ಹಿಂತಿರುಗಿ ಹೋದನು.</verse>
				<verse number="14">ಉಳಿದವರು ಪೆರ್ಗೆದಿಂದ ಪಿಸಿದ್ಯದ ಅಂತಿಯೋಕ್ಯಕ್ಕೆ ಹೋದರು. ಸಬ್ಬತ್ ದಿನ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.</verse>
				<verse number="15">ನಿಯಮ ಮತ್ತು ಪ್ರವಾದಿಗಳ ಗ್ರಂಥವು ಪಾರಾಯಣವಾದ ತರುವಾಯ, ಸಭಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಪ್ರೋತ್ಸಾಹ ಕೊಡುವ ಸಂದೇಶ ನಿಮ್ಮಲ್ಲಿದ್ದರೆ, ಮಾತನಾಡಿರಿ,” ಎಂದು ಕೇಳಿಕೊಂಡರು.</verse>
				<verse number="16">ಪೌಲನು ಎದ್ದು ನಿಂತು, ಕೈಸನ್ನೆ ಮಾಡಿ ಹೀಗೆ ಹೇಳಿದನು: “ಇಸ್ರಾಯೇಲ್ ಜನರೇ, ದೇವರಲ್ಲಿ ಭಯಭಕ್ತಿಯುಳ್ಳವರೇ, ಕೇಳಿರಿ!</verse>
				<verse number="17">ಈ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃಗಳನ್ನು ಆಯ್ದುಕೊಂಡರು; ಈಜಿಪ್ಟಿನಲ್ಲಿ ನಮ್ಮ ಜನರು ವಾಸಿಸುತ್ತಿದ್ದಾಗ; ಅವರನ್ನು ಪ್ರಬಲರನ್ನಾಗಿ ಮಾಡಿ ತಮ್ಮ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಅವರನ್ನು ಬಿಡಿಸಿ ಕರೆತಂದರು;</verse>
				<verse number="18">ಅರಣ್ಯದಲ್ಲಿ ಸುಮಾರು ನಲವತ್ತು ವರ್ಷ ಅವರ ನಡತೆಯನ್ನು ಸಹಿಸಿಕೊಂಡರು.</verse>
				<verse number="19">ಕಾನಾನ್ ದೇಶದಲ್ಲಿದ್ದ ಏಳು ರಾಜ್ಯಗಳನ್ನು ಜಯಿಸಿ, ಅವರ ದೇಶವನ್ನು ತಮ್ಮ ಜನರಿಗೆ ಬಾಧ್ಯವಾಗಿ ದಯಪಾಲಿಸಿದರು.</verse>
				<verse number="20">ಇದಕ್ಕೆ ನಾನೂರ ಐವತ್ತು ವರ್ಷಗಳ ಕಾಲ ಹಿಡಿಯಿತು. “ಇದಾದನಂತರ, ದೇವರು ಅವರಿಗೆ ಪ್ರವಾದಿ ಸಮುಯೇಲನ ಸಮಯದವರೆಗೆ ನ್ಯಾಯಸ್ಥಾಪಕರನ್ನು ದಯಪಾಲಿಸಿದರು.</verse>
				<verse number="21">ಅನಂತರ ಜನರು ಒಬ್ಬ ಅರಸನು ತಮಗೆ ಬೇಕೆಂದು ಕೇಳಿಕೊಳ್ಳಲು, ದೇವರು ಬೆನ್ಯಾಮೀನ್ ಗೋತ್ರದ ಕೀಷನ ಮಗ ಸೌಲನನ್ನು ಅವರಿಗೆ ಕೊಟ್ಟರು. ಇವನು ನಲವತ್ತು ವರ್ಷ ಆಳ್ವಿಕೆ ಮಾಡಿದನು.</verse>
				<verse number="22">ದೇವರು ಸೌಲನನ್ನು ಅರಸುತನದಿಂದ ತೆಗೆದುಹಾಕಿ, ದೇವರು ದಾವೀದನನ್ನು ಅವರ ಅರಸನನ್ನಾಗಿ ಎಬ್ಬಿಸಿದರು. ಇವನನ್ನು ಕುರಿತು, ‘ಇಷಯನ ಮಗ ದಾವೀದನು ನನಗೆ ಸಿಕ್ಕಿದನು. ನನ್ನ ಹೃದಯಕ್ಕೆ ತಕ್ಕಂಥ ಮನುಷ್ಯನು; ಇವನು ನಾನು ಅಪೇಕ್ಷಿಸುವುದೆಲ್ಲವನ್ನೂ ಮಾಡುವನು,’ ಎಂದು ದೇವರು ತಾವೇ ಸಾಕ್ಷಿಕೊಟ್ಟರು.</verse>
				<verse number="23">“ಈ ದಾವೀದನ ಸಂತತಿಯಲ್ಲಿಯೇ ದೇವರು ಇಸ್ರಾಯೇಲಿಗೆ ತನ್ನ ವಾಗ್ದಾನದಂತೆ ರಕ್ಷಕ ಯೇಸುವನ್ನು ತಂದರು.</verse>
				<verse number="24">ಯೇಸು ಬರುವ ಮೊದಲು, ಸ್ನಾನಿಕ ಯೋಹಾನನು ಎಲ್ಲಾ ಇಸ್ರಾಯೇಲರಿಗೆ ಪಶ್ಚಾತ್ತಾಪ ಮತ್ತು ದೀಕ್ಷಾಸ್ನಾನದ ಬಗ್ಗೆ ಸಾರಿದನು.</verse>
				<verse number="25">ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ, ‘ನನ್ನನ್ನು ಯಾರೆಂದು ನೀವು ನೆನೆಸುತ್ತೀರಿ? ನೀವು ಎದುರು ನೋಡುತ್ತಿರುವ ಅವರು ನಾನಲ್ಲ, ಇಗೋ, ಅವರು ನನ್ನ ನಂತರ ಬರುತ್ತಾರೆ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,’ ಎಂದನು.</verse>
				<verse number="26">“ಅಬ್ರಹಾಮನ ವಂಶದವರಾದ ಸಹೋದರರೇ, ದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಈ ರಕ್ಷಣೆಯ ಸಂದೇಶ ಕಳುಹಿಸಿರುವುದು ನಮಗಾಗಿಯೇ.</verse>
				<verse number="27">ಯೆರೂಸಲೇಮಿನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿಗಳೂ ಯೇಸುವನ್ನು ಯಾರೆಂದು ಗುರುತಿಸಿಲಿಲ್ಲ. ಆದರೂ ಅವರು ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ವಾಕ್ಯಗಳನ್ನೂ ಗ್ರಹಿಸಲಿಲ್ಲ. ಅವರು ಯೇಸುವನ್ನು ಅಪರಾಧಿಯೆಂದು ತೀರ್ಪು ಮಾಡಿ, ಪ್ರವಾದಿಗಳ ವಾಕ್ಯಗಳನ್ನು ನೆರವೇರಿಸಿದರು.</verse>
				<verse number="28">ಮರಣದಂಡನೆ ವಿಧಿಸಲು ಯಾವುದೇ ಕಾರಣ ಸಿಗದಿದ್ದರೂ ಯೇಸುವನ್ನು ಕೊಲ್ಲಬೇಕೆಂದು ಪಿಲಾತನನ್ನು ಕೇಳಿಕೊಂಡರು.</verse>
				<verse number="29">ಪವಿತ್ರ ವೇದದಲ್ಲಿ ಯೇಸುವನ್ನು ಕುರಿತು ಬರೆದಿರುವ ಪ್ರಕಾರ ನೆರವೇರಿದ ನಂತರ, ಅವರನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಯಲ್ಲಿಟ್ಟರು.</verse>
				<verse number="30">ಆದರೆ ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದರು.</verse>
				<verse number="31">ಯೇಸುವಿನೊಡನೆ ಗಲಿಲಾಯದಿಂದ ಯೆರೂಸಲೇಮಿನವರೆಗೆ ಮುಂಚೆ ಬಂದಿದ್ದವರಿಗೆ ಯೇಸು ಅನೇಕ ದಿನಗಳವರೆಗೆ ಕಾಣಿಸಿಕೊಂಡರು. ಈಗ ಅವರೇ ನಮ್ಮ ಜನರಿಗೆ ಯೇಸುವಿನ ಸಾಕ್ಷಿಗಳಾಗಿದ್ದಾರೆ.</verse>
				<verse number="32">“ನಾವು ನಿಮಗೆ, ದೇವರು ನಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ್ದನ್ನು ಶುಭವರ್ತಮಾನವನ್ನಾಗಿ ಹೇಳುತ್ತಿದ್ದೇವೆ.</verse>
				<verse number="33">ದೇವರು ಯೇಸುವನ್ನು ಎಬ್ಬಿಸುವುದರ ಮೂಲಕ ಅವರ ಸಂತತಿಯಾದ ನಮಗಿಂದು ಆ ವಾಗ್ದಾನವನ್ನು ನೆರವೇರಿಸಿದ್ದಾರೆ; ಮಾತ್ರವಲ್ಲದೆ ಎರಡನೆಯ ಕೀರ್ತನೆಯಲ್ಲಿ ಹೀಗೆ ಬರೆಯಲಾಗಿದೆ: “ ‘ನೀನು ನನ್ನ ಪುತ್ರನು, ಇಂದು ನಾನು ನಿನ್ನ ತಂದೆಯಾಗಿದ್ದೇನೆ.’</verse>
				<verse number="34">ಹೀಗೆ ಯೇಸುವನ್ನು ಸಮಾಧಿಯಲ್ಲಿ ಕೊಳೆಯಲು ಬಿಡದೇ ದೇವರು ಅವರನ್ನು ಜೀವಂತವಾಗಿ ಎಬ್ಬಿಸಿದ ಸತ್ಯವು ಈ ಮಾತುಗಳಲ್ಲಿ ಬಂದಿದೆ: “ ‘ನಾನು ದಾವೀದನಿಗೆ ವಾಗ್ದಾನ ಮಾಡಿದ ಪವಿತ್ರ ಹಾಗೂ ನಿಶ್ಚಯವಾದ ಆಶೀರ್ವಾದಗಳನ್ನು ನಿಮಗೆ ಕೊಡುವೆನು’</verse>
				<verse number="35">ಇನ್ನೊಂದು ಕೀರ್ತನೆಯಲ್ಲಿ ಹೀಗೆ ಹೇಳಿದ್ದಾರೆ: “ ‘ನಿಮ್ಮ ಪರಿಶುದ್ಧ ವ್ಯಕ್ತಿಯನ್ನು ಕೊಳೆಯುವಂತೆ ಬಿಡುವುದೇ ಇಲ್ಲ.’</verse>
				<verse number="36">“ದಾವೀದನು ತನ್ನ ಜೀವಮಾನದಲ್ಲಿ ದೇವರ ಉದ್ದೇಶಕ್ಕೆ ಅನುಗುಣವಾಗಿ ಸೇವೆಮಾಡಿ ಮರಣಹೊಂದಿದನು. ಅವನ ಪಿತೃಗಳೊಂದಿಗೆ ಅವನನ್ನು ಸೇರಿಸಿದರು. ಅವನ ದೇಹ ಕೊಳೆತುಹೋಯಿತು.</verse>
				<verse number="37">ಆದರೆ ದೇವರು ಮರಣದಿಂದ ಎಬ್ಬಿಸಿದ ಈ ಯೇಸು ಕೊಳೆಯುವ ಅವಸ್ಥೆಯನ್ನು ಕಾಣಲಿಲ್ಲ.</verse>
				<verse number="38">“ಆದ್ದರಿಂದ, ನನ್ನ ಸಹೋದರರೇ, ಯೇಸುವಿನ ಮೂಲಕವೇ ಪಾಪಕ್ಷಮಾಪಣೆ ಸಾಧ್ಯವೆಂದು ನಿಮಗೆ ಸಾರಲಾಗುತ್ತಿದೆಯೆಂದು ನೀವು ತಿಳಿಯಬೇಕೆಂಬುದೇ ನನ್ನ ಅಪೇಕ್ಷೆ.</verse>
				<verse number="39">ಮೋಶೆಯ ನಿಯಮದ ಮೂಲಕವಾಗಿ ನೀತಿವಂತರೆಂದು ನಿರ್ಣಯಿಸಲಾಗದ ಎಲ್ಲಾ ಪಾಪಗಳಿಂದ ಬಿಡುಗಡೆಯಾಗಿ, ಯೇಸುವನ್ನು ನಂಬುವ ಪ್ರತಿಯೊಬ್ಬರೂ ಯೇಸುವಿನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರಾಗುವರು.</verse>
				<verse number="40">ಆದ್ದರಿಂದ ಪ್ರವಾದಿಗಳು ಹೇಳಿದ ಮಾತುಗಳು ನಿಮ್ಮಲ್ಲಿ ನಡೆಯದಂತೆ ಜಾಗರೂಕರಾಗಿರಿ:</verse>
				<verse number="41">“ ‘ತಿರಸ್ಕಾರ ಮಾಡುವವರೇ, ಗಮನಿಸಿರಿ, ಆಶ್ಚರ್ಯಪಟ್ಟು, ಚದುರಿ ಹೋಗಿರಿ, ನಿಮ್ಮ ಜೀವಮಾನ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡಲಿದ್ದೇನೆ ಆ ಕಾರ್ಯವನ್ನು ಯಾರಾದರೂ ವಿವರಿಸಿ ಹೇಳಿದರೂ ನೀವದನ್ನು ಎಂದಿಗೂ ನಂಬುವುದೇ ಇಲ್ಲ,’ ” ಎಂದು ಹೇಳಿದನು.</verse>
				<verse number="42">ಪೌಲ ಬಾರ್ನಬರು ಸಭಾಮಂದಿರವನ್ನು ಬಿಟ್ಟು ಹೊರಡುವಾಗ, “ಬರುವ ಸಬ್ಬತ್ ದಿನವೂ ಬಂದು ಇದೇ ವಿಷಯಗಳನ್ನು ಕುರಿತು ಮಾತನಾಡಿರಿ,” ಎಂದು ಜನರು ಅವರನ್ನು ಕೇಳಿಕೊಂಡರು.</verse>
				<verse number="43">ಸಭೆಯು ಮುಗಿದ ತರುವಾಯ ಅನೇಕ ಯೆಹೂದ್ಯರೂ ದೇವಭಕ್ತಿವುಳ್ಳ ಯೆಹೂದಿ ಮಾರ್ಗದ ವಿಶ್ವಾಸಿಗಳು ಪೌಲ ಬಾರ್ನಬರನ್ನು ಹಿಂಬಾಲಿಸಿದರು. ಪೌಲ ಬಾರ್ನಬರು ತಮ್ಮೊಂದಿಗೆ ಬಂದವರ ಜೊತೆ ಮಾತನಾಡಿ ದೇವರ ಕೃಪೆಯಲ್ಲಿ ಮುಂದುವರಿಯಲು ಅವರನ್ನು ಒಡಂಬಡಿಸಿದರು.</verse>
				<verse number="44">ಮುಂದಿನ ಸಬ್ಬತ್ ದಿನ ಕರ್ತದೇವರ ವಾಕ್ಯ ಕೇಳಲು ನಗರದ ಜನರೆಲ್ಲರೂ ಹೆಚ್ಚಾಗಿ ಕೂಡಿಬಂದರು.</verse>
				<verse number="45">ಜನಸಮೂಹಗಳನ್ನು ಯೆಹೂದ್ಯರು ಕಂಡಾಗ ಅಸೂಯೆಗೊಂಡು ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.</verse>
				<verse number="46">ಆಗ ಪೌಲ, ಬಾರ್ನಬರು ಧೈರ್ಯದಿಂದ ಅವರಿಗೆ ಉತ್ತರಕೊಟ್ಟರು: “ದೇವರ ವಾಕ್ಯವನ್ನು ನಾವು ಮೊದಲು ನಿಮಗೆ ಹೇಳುವುದು ಅವಶ್ಯವಾಗಿತ್ತು. ಆದರೆ ನೀವು ಅದನ್ನು ತಳ್ಳಿಬಿಟ್ಟಿದ್ದರಿಂದಲೂ ನಿತ್ಯಜೀವಕ್ಕೆ ನೀವು ಅಯೋಗ್ಯರೆಂದು ತೀರ್ಮಾನಿಸಿಕೊಂಡಿದ್ದೀರಿ. ಆದುದರಿಂದ ಇಗೋ, ನಾವೀಗ ಯೆಹೂದ್ಯರಲ್ಲದ ಜನರ ಬಳಿಗೆ ಹೋಗುತ್ತೇವೆ.</verse>
				<verse number="47">ಕರ್ತದೇವರು ನಮಗೆ ಆಜ್ಞಾಪಿಸಿದ್ದು ಇಂತಿದೆ: “ ‘ಭೂಲೋಕದ ಕಟ್ಟಕಡೆಯವರೆಗೆ ನೀನು ರಕ್ಷಣೆಯನ್ನು ತರುವಂತೆ ನಾನು ಯೆಹೂದ್ಯರಲ್ಲದವರಿಗೆ ನಿನ್ನನ್ನು ಬೆಳಕನ್ನಾಗಿ ನೇಮಿಸಿರುವೆನು.’ ”</verse>
				<verse number="48">ಯೆಹೂದ್ಯರಲ್ಲದವರು ಇದನ್ನು ಕೇಳಿದಾಗ, ಬಹಳ ಹರ್ಷಗೊಂಡು ಕರ್ತದೇವರ ವಾಕ್ಯವನ್ನು ಘನಪಡಿಸಿದರು. ನಿತ್ಯಜೀವಕ್ಕೆ ನೇಮಕರಾದ ಎಲ್ಲರೂ ವಿಶ್ವಾಸವನ್ನಿಟ್ಟರು.</verse>
				<verse number="49">ಆ ಪ್ರದೇಶದಲ್ಲೆಲ್ಲಾ ಕರ್ತದೇವರ ವಾಕ್ಯವು ಪ್ರಸಾರವಾಗುತ್ತಾ ಬಂತು.</verse>
				<verse number="50">ಆದರೆ ಯೆಹೂದ್ಯರು, ಆರಾಧಕರಾಗಿದ್ದ ಮಾನ್ಯರಾದ ಸ್ತ್ರೀಯರನ್ನೂ ನಗರದ ಗಣ್ಯ ನಾಯಕರನ್ನೂ ಪ್ರೇರೇಪಿಸಿ, ಪೌಲ, ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ತಮ್ಮ ಪ್ರದೇಶದಿಂದ ಹೊರಗೋಡಿಸಿದರು.</verse>
				<verse number="51">ಆಗ ಅವರಿಗೆ ವಿರೋಧವಾಗಿ ಪೌಲ, ಬಾರ್ನಬರು ತಮ್ಮ ಪಾದದ ಧೂಳನ್ನು ಝಾಡಿಸಿ ಇಕೋನ್ಯಕ್ಕೆ ಹೊರಟು ಹೋದರು.</verse>
				<verse number="52">ಶಿಷ್ಯರು ಬಹಳ ಸಂತೋಷದಿಂದಲೂ ಪವಿತ್ರಾತ್ಮ ದೇವರಿಂದಲೂ ತುಂಬಿದವರಾದರು.</verse>
			</chapter>
			<chapter number="14">
				<verse number="1">ಇಕೋನ್ಯದಲ್ಲಿಯೂ ಪೌಲ ಮತ್ತು ಬಾರ್ನಬರು ವಾಡಿಕೆಯಂತೆ ಯೆಹೂದ್ಯರ ಸಭಾಮಂದಿರಕ್ಕೆ ಹೋದರು. ಅವರು ಅಲ್ಲಿ ಪರಿಣಾಮಕಾರಿಯಾಗಿ ಮಾತನಾಡಿದ್ದರಿಂದ ಬಹು ಸಂಖ್ಯೆಯಲ್ಲಿ ಯೆಹೂದ್ಯರೂ ಗ್ರೀಕರೂ ವಿಶ್ವಾಸವನ್ನಿಟ್ಟರು.</verse>
				<verse number="2">ಆದರೆ ನಂಬಲು ನಿರಾಕರಿಸಿದ ಯೆಹೂದ್ಯರು ಯೆಹೂದ್ಯರಲ್ಲದವರ ಮನಸ್ಸನ್ನು ಕೆಡಿಸಿ, ಸಹೋದರರ ಮೇಲೆ ವಿರೋಧ ಭಾವನೆ ಹುಟ್ಟಿಸಿದರು.</verse>
				<verse number="3">ಆದ್ದರಿಂದ ಪೌಲ ಬಾರ್ನಬರು ಅಲ್ಲಿ ಬಹಳ ಸಮಯವಿದ್ದು ಕರ್ತ ಯೇಸುವಿನ ವಿಷಯದಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದರು. ಆದ್ದರಿಂದ ಕರ್ತ ಯೇಸು ಅವರ ಕೈಗಳಿಂದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುವ ಶಕ್ತಿಯನ್ನು ಕೊಟ್ಟು ತಮ್ಮ ಕೃಪಾವಾಕ್ಯವನ್ನು ಖಚಿತಪಡಿಸಿದರು.</verse>
				<verse number="4">ಆದರೆ ಪಟ್ಟಣದ ಜನರಲ್ಲಿ ಭಿನ್ನಾಭಿಪ್ರಾಯಗಳಾದವು. ಕೆಲವರು ಯೆಹೂದ್ಯರ ಪರವಾದರು, ಇನ್ನೂ ಕೆಲವರು ಅಪೊಸ್ತಲರ ಪರವಾದರು.</verse>
				<verse number="5">ಯೆಹೂದ್ಯರೂ ಯೆಹೂದ್ಯರಲ್ಲದವರೂ ತಮ್ಮ ನಾಯಕರನ್ನು ಕೂಡಿಕೊಂಡು ಪೌಲ, ಬಾರ್ನಬರನ್ನು ಅವಮಾನ ಮಾಡಿ ಅವರ ಮೇಲೆ ಕಲ್ಲೆಸೆಯಬೇಕೆಂದು ನುಗ್ಗಿದಾಗ,</verse>
				<verse number="6">ಈ ವಿಷಯ ಅಪೊಸ್ತಲರಿಗೆ ತಿಳಿಯಲು ಅವರು ಅಲ್ಲಿಂದ ಪಲಾಯನ ಮಾಡಿ ಲುಕವೋನಿಯದ ಪಟ್ಟಣಗಳಾದ ಲುಸ್ತ್ರ ಮತ್ತು ದೆರ್ಬೆ ಹಾಗೂ ಅವುಗಳ ಸುತ್ತಮುತ್ತಲ ಪ್ರದೇಶಗಳಿಗೆ ಓಡಿಹೋದರು.</verse>
				<verse number="7">ಹೀಗೆ ಅವರು ಅಲ್ಲೆಲ್ಲಾ ಸುವಾರ್ತೆ ಸಾರಿದರು.</verse>
				<verse number="8">ಲುಸ್ತ್ರದಲ್ಲಿ ಒಬ್ಬ ಕುಂಟನಿದ್ದನು. ಅವನು ಹುಟ್ಟು ಕುಂಟನಾಗಿದ್ದುದರಿಂದ ಅವನೆಂದೂ ನಡೆದಾಡಿರಲಿಲ್ಲ.</verse>
				<verse number="9">ಪೌಲನು ಮಾತನಾಡುತ್ತಿರುವುದನ್ನು ಅವನು ಆಲಿಸುತ್ತಿದ್ದನು. ಪೌಲನು ನೇರವಾಗಿ ಅವನನ್ನೇ ದೃಷ್ಟಿಸಿ ನೋಡಿ, ತಾನು ಗುಣಹೊಂದಲು ಅವನಲ್ಲಿ ವಿಶ್ವಾಸವಿದೆಯೆಂದು ಕಂಡು,</verse>
				<verse number="10">“ಎದ್ದೇಳು, ಕಾಲೂರಿ ನಿಲ್ಲು!” ಎಂದು ದೊಡ್ಡ ಧ್ವನಿಯಿಂದ ಹೇಳಿದನು. ಆ ಮನುಷ್ಯನು ಜಿಗಿದು ನಿಂತು, ನಡೆದಾಡಲು ಪ್ರಾರಂಭಿಸಿದನು.</verse>
				<verse number="11">ಪೌಲನು ಮಾಡಿದ್ದನ್ನು ಜನರು ಕಂಡಾಗ, ಲುಕವೋನಿಯ ಭಾಷೆಯಲ್ಲಿ, “ಮಾನವ ರೂಪದಲ್ಲಿ ದೇವರುಗಳು ಬಂದಿದ್ದಾರೆ!” ಎಂದು ಘೋಷಿಸಿದರು.</verse>
				<verse number="12">ಅವರು ಬಾರ್ನಬನನ್ನು “ಜೆಯುಸ್” ದೇವರು ಎಂದೂ ಪೌಲನು ಪ್ರಮುಖ ಭಾಷಣಕಾರನಾದ್ದರಿಂದ ಅವನನ್ನು “ಹೆರ್ಮೆ” ದೇವರು ಎಂದೂ ಕರೆದರು.</verse>
				<verse number="13">ಪಟ್ಟಣದ ಹೊರಗೆ ಸಮೀಪದಲ್ಲಿದ್ದ ಜೆಯುಸ್ ದೇವರ ಗುಡಿಯ ಪೂಜಾರಿಯು, ಪಟ್ಟಣದ ದ್ವಾರಗಳ ಬಳಿಗೆ ಹೋರಿಗಳನ್ನೂ ಹೂಮಾಲೆಗಳನ್ನೂ ತೆಗೆದುಕೊಂಡು ಬರಲು, ಅವರಿಗಾಗಿ ಯಜ್ಞಗಳನ್ನು ಅರ್ಪಿಸಲು ಜನರು ಅಪೇಕ್ಷಿಸಿದರು.</verse>
				<verse number="14">ಆದರೆ ಅಪೊಸ್ತಲರಾದ ಬಾರ್ನಬ ಮತ್ತು ಪೌಲರು ಇದನ್ನು ಕೇಳಿದಾಗ, ತಮ್ಮ ಬಟ್ಟೆಗಳನ್ನು ಹರಿದುಕೊಂಡು ಜನಸಮೂಹದ ಕಡೆಗೆ ಓಡಿಬಂದು ಕೂಗಿ ಹೇಳಿದ್ದೇನೆಂದರೆ:</verse>
				<verse number="15">“ಪ್ರಿಯ ಜನರೇ, ನೀವಿದನ್ನು ಏಕೆ ಮಾಡುತ್ತಿರುವಿರಿ? ನಾವೂ ನಿಮ್ಮ ಹಾಗೆಯೇ ಮಾನವರು. ಇಂಥಾ ವ್ಯರ್ಥವಾದ ಸಂಗತಿಗಳನ್ನು ಬಿಟ್ಟು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದ ಜೀವಿಸುವ ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ನಿಮಗೆ ಸುವಾರ್ತೆಯನ್ನು ಸಾರುತ್ತಿದ್ದೇವೆ.</verse>
				<verse number="16">ದೇವರು ಹಿಂದಿನ ಕಾಲದಲ್ಲಿ, ಆಯಾ ದೇಶಗಳು ತಮ್ಮ ತಮ್ಮ ಮಾರ್ಗಗಳಲ್ಲಿಯೇ ನಡೆಯುವಂತೆ ಬಿಟ್ಟುಬಿಟ್ಟರು.</verse>
				<verse number="17">ಆದರೂ ದೇವರು ತಮ್ಮ ಬಗ್ಗೆ ಸಾಕ್ಷಿಕೊಡದೆ ಇರಲಿಲ್ಲ. ಆಕಾಶದಿಂದ ಮಳೆಯನ್ನೂ ಸಕಾಲದಲ್ಲಿ ಬೆಳೆಯನ್ನೂ ನಿಮಗೆ ದಯಪಾಲಿಸಿ ಆಹಾರಕೊಟ್ಟು ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೆಯದನ್ನು ಮಾಡುತ್ತಾ ಬಂದವರು ದೇವರೇ.”</verse>
				<verse number="18">ಹೀಗೆ ಹೇಳಿದರೂ ಆ ಜನಸಮೂಹ ಅವರಿಗೆ ಬಲಿಯರ್ಪಿಸುವುದನ್ನು ತಡೆಯಲು ಕಷ್ಟವಾಯಿತು.</verse>
				<verse number="19">ಅದೇ ಸಮಯದಲ್ಲಿ ಅಂತಿಯೋಕ್ಯ ಮತ್ತು ಇಕೋನ್ಯದಿಂದ ಕೆಲವು ಜನ ಯೆಹೂದ್ಯರು ಬಂದು ಜನಸಮೂಹವನ್ನು ತಮ್ಮ ಕಡೆಗೆ ಒಲಿಸಿಕೊಂಡು, ಪೌಲನ ಮೇಲೆ ಕಲ್ಲೆಸೆಯಲು, ಅವನು ಸತ್ತನೆಂದು ಭಾವಿಸಿ ಅವನನ್ನು ಊರ ಹೊರಗೆ ಎಳೆದು ಹಾಕಿದರು.</verse>
				<verse number="20">ಆದರೆ ಶಿಷ್ಯರು ಬಂದು ಪೌಲನ ಸುತ್ತಲೂ ನಿಂತುಕೊಳ್ಳಲು ಅವನು ಎದ್ದು ಪಟ್ಟಣಕ್ಕೆ ಹಿಂದಿರುಗಿ ಹೋದನು. ಮರುದಿನ ಅವನೂ ಬಾರ್ನಬನೂ ದೆರ್ಬೆಗೆ ಹೊರಟು ಹೋದರು.</verse>
				<verse number="21">ಆ ಪಟ್ಟಣದಲ್ಲಿ ಪೌಲ, ಬಾರ್ನಬರು ಸುವಾರ್ತೆಯನ್ನು ಸಾರಿದರು. ಬಹುಜನರನ್ನು ಶಿಷ್ಯರನ್ನಾಗಿ ಮಾಡಿದರು. ಅನಂತರ ಅವರು ಲುಸ್ತ್ರ, ಇಕೋನ್ಯ ಮತ್ತು ಅಂತಿಯೋಕ್ಯಗಳಿಗೆ ಹಿಂದಿರುಗಿದರು.</verse>
				<verse number="22">ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು.</verse>
				<verse number="23">ಪ್ರತಿಯೊಂದು ಸಭೆಯಲ್ಲಿ ಪೌಲ, ಬಾರ್ನಬರು ಸಭಾ ಹಿರಿಯರನ್ನು ನೇಮಿಸಿ, ಉಪವಾಸ ಪ್ರಾರ್ಥನೆಯನ್ನು ಮಾಡಿ ಅವರು ನಂಬಿದ್ದ ಕರ್ತ ಯೇಸುವಿಗೆ ಅವರನ್ನು ಒಪ್ಪಿಸಿಕೊಟ್ಟರು.</verse>
				<verse number="24">ತರುವಾಯ ಪಿಸಿದ್ಯವನ್ನು ದಾಟಿಕೊಂಡು, ಪಂಫುಲ್ಯದೊಳಗೆ ಬಂದರು,</verse>
				<verse number="25">ಪೆರ್ಗೆಯಲ್ಲಿ ದೇವರ ವಾಕ್ಯವನ್ನು ಸಾರಿ, ಅಲ್ಲಿಂದ ಅತ್ತಾಲಿಯ ಎಂಬಲ್ಲಿಗೆ ಹೋದರು.</verse>
				<verse number="26">ಅತ್ತಾಲಿಯದಿಂದ ನೌಕೆಯಲ್ಲಿ ಪ್ರಯಾಣಮಾಡಿ ಅಂತಿಯೋಕ್ಯಕ್ಕೆ ಬಂದರು. ಅವರು ಪೂರೈಸಿದ ಸೇವೆಗಾಗಿ ದೇವರ ಕೃಪೆಗೆ ತಮ್ಮನ್ನು ಸಮರ್ಪಿಸಿಕೊಂಡದ್ದು ಈ ಪಟ್ಟಣದಿಂದಲೇ.</verse>
				<verse number="27">ಇಲ್ಲಿಗೆ ತಲುಪಿದಾಗ, ಅವರು ಸಭೆಯನ್ನು ಒಟ್ಟುಕೂಡಿಸಿದರು. ದೇವರು ಅವರಿಗೆ ತಮ್ಮ ಮುಖಾಂತರವಾಗಿ ಮಾಡಿದ್ದನ್ನೂ ಯೆಹೂದ್ಯರಲ್ಲದವರಿಗೂ ದೇವರು ವಿಶ್ವಾಸದ ದ್ವಾರವನ್ನು ತೆರೆದಿರುವುದನ್ನೂ ವರದಿಮಾಡಿದರು.</verse>
				<verse number="28">ಅವರು ಅಲ್ಲಿಯೇ ಶಿಷ್ಯರೊಂದಿಗೆ ಬಹುಕಾಲ ತಂಗಿದ್ದರು.</verse>
			</chapter>
			<chapter number="15">
				<verse number="1">ಕೆಲವು ಜನರು ಯೂದಾಯದಿಂದ ಅಂತಿಯೋಕ್ಯಕ್ಕೆ ಬಂದು ಅಲ್ಲಿಯ ಸಹೋದರರಿಗೆ, “ಮೋಶೆ ಬೋಧಿಸಿದ ಪದ್ಧತಿಯಂತೆ ನೀವು ಸುನ್ನತಿ ಹೊಂದದಿದ್ದರೆ ನೀವು ರಕ್ಷಣೆ ಹೊಂದಲಾರಿರಿ,” ಎಂದು ಬೋಧಿಸತೊಡಗಿದರು.</verse>
				<verse number="2">ಇದರಿಂದ ಪೌಲ, ಬಾರ್ನಬರು ಅವರೊಂದಿಗೆ ಭಿನ್ನಾಭಿಪ್ರಾಯವುಳ್ಳವರಾಗಿ ತೀವ್ರ ವಿವಾದವುಂಟಾಯಿತು. ಈ ಪ್ರಶ್ನೆಯ ವಿಷಯದಲ್ಲಿ ಅಪೊಸ್ತಲರನ್ನೂ ಹಿರಿಯರನ್ನೂ ಭೇಟಿಯಾಗಲು, ತಮ್ಮಲ್ಲಿ ಬೇರೆ ಕೆಲವರು ಪೌಲ, ಬಾರ್ನಬರೊಂದಿಗೆ ಯೆರೂಸಲೇಮಿಗೆ ಹೋಗಬೇಕೆಂದು ನಿರ್ಣಯಿಸಲಾಯಿತು.</verse>
				<verse number="3">ಆದ್ದರಿಂದ ಸಭೆಯವರು ಅವರನ್ನು ಸಾಗಕಳುಹಿಸಲು, ಅವರು ಫೊಯಿನಿಕೆಯ ಮತ್ತು ಸಮಾರ್ಯದ ಮಾರ್ಗವಾಗಿ ಪ್ರಯಾಣ ಮಾಡುವಾಗ, ಯೆಹೂದ್ಯರಲ್ಲದವರ ಪರಿವರ್ತನೆಯನ್ನು ವಿವರವಾಗಿ ಅಲ್ಲಿಯವರೆಗೆ ತಿಳಿಸುತ್ತಾ ಸಹೋದರರೆಲ್ಲರಿಗೂ ಮಹಾಸಂತೋಷವನ್ನುಂಟುಮಾಡಿದರು.</verse>
				<verse number="4">ಅವರು ಯೆರೂಸಲೇಮನ್ನು ತಲುಪಿದಾಗ, ಸಭೆಯವರು, ಅಪೊಸ್ತಲರು ಹಾಗೂ ಹಿರಿಯರು ಅವರನ್ನು ಸ್ವಾಗತಿಸಿದರು. ದೇವರು ತಮ್ಮ ಮುಖಾಂತರವಾಗಿ ಮಾಡಿದ್ದನ್ನು ಅವರು ತಿಳಿಸಿದರು.</verse>
				<verse number="5">ಆದರೆ ಫರಿಸಾಯರ ಪಂಗಡಕ್ಕೆ ಸೇರಿದ ಕೆಲವು ವಿಶ್ವಾಸಿಗಳು ಎದ್ದು ನಿಂತುಕೊಂಡು, “ಯೆಹೂದ್ಯರಲ್ಲದವರು ಸುನ್ನತಿ ಹೊಂದಬೇಕು ಮತ್ತು ಮೋಶೆಯ ನಿಯಮಕ್ಕೆ ವಿಧೇಯರಾಗಬೇಕು,” ಎಂದರು.</verse>
				<verse number="6">ಅಪೊಸ್ತಲರು ಮತ್ತು ಹಿರಿಯರು ಈ ವಿಷಯದ ಕುರಿತಾಗಿ ವಿಚಾರಿಸಲು ಸಭೆ ಸೇರಿದರು.</verse>
				<verse number="7">ಬಹಳ ಚರ್ಚೆಯಾಗುತ್ತಿರುವಾಗ ಪೇತ್ರನು ಎದ್ದು ನಿಂತು ಅವರಿಗೆ, “ಸಹೋದರರೇ, ಯೆಹೂದ್ಯರಲ್ಲದವರು ನನ್ನ ಬಾಯಿಂದ ಸುವಾರ್ತೆಯ ವಾಕ್ಯವನ್ನು ಕೇಳಿ ನಂಬಬೇಕೆಂಬ ಉದ್ದೇಶದಿಂದ ನಿಮ್ಮೊಳಗಿಂದ ನನ್ನನ್ನು ದೇವರು ಬಹು ದಿನಗಳ ಹಿಂದೆ ಆಯ್ದುಕೊಂಡರೆಂಬುದು ನಿಮಗೆ ತಿಳಿದೇ ಇದೆ.</verse>
				<verse number="8">ಹೃದಯವನ್ನು ಬಲ್ಲ ದೇವರು, ನಮಗೆ ಪವಿತ್ರಾತ್ಮ ದೇವರನ್ನು ಕೊಟ್ಟಂತೆಯೇ ಯಹೂದ್ಯರಲ್ಲದವರಿಗೂ ದಯಪಾಲಿಸಿ, ಅವರ ಬಗ್ಗೆ ಸಾಕ್ಷಿಕೊಟ್ಟರು.</verse>
				<verse number="9">ದೇವರು ಅವರಿಗೂ ನಮಗೂ ಮಧ್ಯದಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡದೆ, ವಿಶ್ವಾಸದ ಮೂಲಕ ಅವರ ಹೃದಯಗಳನ್ನು ಶುದ್ಧೀಕರಿಸಿದರು.</verse>
				<verse number="10">ಆದ್ದರಿಂದ ನಾವಾಗಲಿ, ನಮ್ಮ ಪಿತೃಗಳಾಗಲಿ, ಹೊರಲಾರದ ನೊಗವನ್ನು ಯೆಹೂದ್ಯರಲ್ಲದ ಶಿಷ್ಯರ ಹೆಗಲ ಮೇಲೆ ಹಾಕಿ, ಈಗ ಏಕೆ ದೇವರನ್ನು ಪರೀಕ್ಷಿಸಲು ಪ್ರಯತ್ನಿಸುತ್ತೀರಿ?</verse>
				<verse number="11">ಆದರೆ ನಾವು ರಕ್ಷಣೆ ಹೊಂದಿದ್ದು ನಮ್ಮ ಕರ್ತ ಯೇಸುವಿನ ಕೃಪೆಯಿಂದಲೇ, ಹಾಗೆಯೇ ಅವರೂ ಹೊಂದುವರು ಎಂಬುದು ನಮ್ಮ ನಂಬಿಕೆ,” ಎಂದನು.</verse>
				<verse number="12">ಇದಕ್ಕೆ ಜನರು ಮೌನವಾಗಿದ್ದು, ಯೆಹೂದ್ಯರಲ್ಲದವರ ಮಧ್ಯದಲ್ಲಿ ದೇವರು ತಮ್ಮ ಮೂಲಕ ಮಾಡಿದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಕುರಿತು ಬಾರ್ನಬ ಮತ್ತು ಪೌಲ ಹೇಳುವುದನ್ನು ಕೇಳಿಸಿಕೊಂಡರು.</verse>
				<verse number="13">ಅವರು ಹೇಳಿ ಮುಗಿಸಿದಾಗ, ಯಾಕೋಬನು ಮಾತನಾಡಿ, “ಸಹೋದರರೇ, ನನ್ನ ಮಾತುಗಳನ್ನು ಆಲಿಸಿರಿ,</verse>
				<verse number="14">ದೇವರು ಯೆಹೂದ್ಯರಲ್ಲದವರೊಳಗಿಂದ ತಮ್ಮ ಹೆಸರಿಗಾಗಿ ಜನರನ್ನು ಆರಿಸಿಕೊಳ್ಳಲು ಹೇಗೆ ದಯೆತೋರಿಸಿದರೆಂದು ಸೀಮೋನನು ಈಗಾಗಲೇ ನಮಗೆ ವಿವರಿಸಿದ್ದಾನೆ.</verse>
				<verse number="15">ಪ್ರವಾದಿಗಳು ಬರೆದಿರುವ ಮಾತುಗಳು ಇದಕ್ಕೆ ಸರಿಹೊಂದುತ್ತವೆ:</verse>
				<verse number="16">“ ‘ಇದಾದನಂತರ ನಾನು ಮರಳಿ ಬರುವೆನು. ಬಿದ್ದುಹೋದ ದಾವೀದನ ಗುಡಾರವನ್ನು ಕಟ್ಟುವೆನು. ಪಾಳುಬಿದ್ದದ್ದನ್ನು ಜೀರ್ಣೋದ್ಧಾರ ಮಾಡಿ, ಅದನ್ನು ಪುನರುಜ್ಜೀವನಗೊಳಿಸುವೆನು.</verse>
				<verse number="17">ಆಗ ಉಳಿದಿರುವ ಜನರಲ್ಲಿ ಯೆಹೂದ್ಯರಲ್ಲದವರೂ ನನ್ನ ಹೆಸರೆತ್ತಿ ಕರೆಯುವವರೂ ಸಹ ಕರ್ತದೇವರನ್ನು ಹುಡುಕುವರು,’</verse>
				<verse number="18">ಎಂದು ನಿತ್ಯತ್ವವನ್ನು ತಿಳಿದಿರುವವರೂ ಇವುಗಳನ್ನೆಲ್ಲಾ ಮಾಡುವವರೂ ಆಗಿರುವ ದೇವರು ಹೇಳುತ್ತಾರೆ.</verse>
				<verse number="19">“ಆದ್ದರಿಂದ, ದೇವರ ಕಡೆಗೆ ತಿರುಗುತ್ತಿರುವ ಯೆಹೂದ್ಯರಲ್ಲದವರಿಗೆ ನಾವು ತೊಂದರೆ ಮಾಡಬಾರದು ಎಂಬುದೇ ನನ್ನ ತೀರ್ಮಾನ.</verse>
				<verse number="20">ಅದರ ಬದಲಾಗಿ ನಾವು ಅವರಿಗೆ, ದೇವರಲ್ಲದವುಗಳಿಂದ ಮಲಿನವಾದ ಆಹಾರದಿಂದಲೂ ಅನೈತಿಕತೆಯಿಂದಲೂ ರಕ್ತವನ್ನೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ರಕ್ತದಿಂದಲೂ ದೂರವಿರಬೇಕು.</verse>
				<verse number="21">ಏಕೆಂದರೆ ಆರಂಭ ಕಾಲದಿಂದಲೂ ಪ್ರತಿಯೊಂದು ಪಟ್ಟಣದಲ್ಲಿ ಮೋಶೆಯ ಗ್ರಂಥವನ್ನು ಬೋಧಿಸಲಾಗುತ್ತದೆ ಹಾಗೂ ಪ್ರತಿ ಸಬ್ಬತ್ ದಿನ ಸಭಾಮಂದಿರಗಳಲ್ಲಿ ಓದಲಾಗುತ್ತದೆ,” ಎಂದು ಹೇಳಿದನು.</verse>
				<verse number="22">ಆಗ ಅಪೊಸ್ತಲರು ಮತ್ತು ಹಿರಿಯರು ಇಡೀ ಸಭೆಯ ಸಮ್ಮತಿ ಪಡೆದು, ಸಹೋದರರಲ್ಲಿ ನಾಯಕರಾಗಿದ್ದ ಬಾರ್ಸಬನೆಂದು ಕರೆಯಲಾದ ಯೂದ ಮತ್ತು ಸೀಲ ಎಂಬಿಬ್ಬರನ್ನು ಆಯ್ದುಕೊಂಡರು. ಅವರನ್ನು ಪೌಲ ಮತ್ತು ಬಾರ್ನಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಲು ನಿರ್ಧರಿಸಿದರು.</verse>
				<verse number="23">ಅವರ ಕೈಯಿಂದ ಬರೆದು ಕೊಟ್ಟದ್ದೇನೆಂದರೆ: ಅಪೊಸ್ತಲರು ಹಾಗೂ ಹಿರಿಯ ಸಹೋದರರು, ಅಂತಿಯೋಕ್ಯ, ಸಿರಿಯ ಮತ್ತು ಕಿಲಿಕ್ಯದಲ್ಲಿ ವಾಸಿಸುವ ಯೆಹೂದ್ಯರಲ್ಲದವರೊಳಗಿನ ಸಹೋದರರಿಗೆ: ವಂದನೆಗಳು.</verse>
				<verse number="24">ನಮ್ಮಿಂದ ಕೆಲವರು ನಮ್ಮ ಅಪ್ಪಣೆಯಿಲ್ಲದೆ ತಮ್ಮ ಮಾತುಗಳಿಂದ ನಿಮ್ಮ ಮನಸ್ಸಿಗೆ ತೊಂದರೆ ಕೊಟ್ಟರೆಂದು ನಾವು ಕೇಳಿದೆವು.</verse>
				<verse number="25">ಆದ್ದರಿಂದ ಕೆಲವರನ್ನು ಆಯ್ದುಕೊಂಡು ಅವರನ್ನು ನಮ್ಮ ಪ್ರಿಯರಾದ ಬಾರ್ನಬ ಮತ್ತು ಪೌಲರೊಂದಿಗೆ ನಿಮ್ಮ ಬಳಿಗೆ ಕಳುಹಿಸುವುದು ಯುಕ್ತವೆಂದು ಒಂದೇ ಮನಸ್ಸಾಗಿರುವ ನಮಗೆ ತೋಚಿತು.</verse>
				<verse number="26">ಅವರು ನಮ್ಮ ಕರ್ತ ಕ್ರಿಸ್ತ ಯೇಸುವಿನ ಹೆಸರಿನ ಪರವಾಗಿ ತಮ್ಮ ಪ್ರಾಣಗಳನ್ನೇ ಬಿಟ್ಟು ಕೊಡುವವರಾಗಿದ್ದಾರೆ.</verse>
				<verse number="27">ಆದ್ದರಿಂದ ನಾವು ಈ ಸಂಗತಿಗಳನ್ನು ಬಾಯಿಮಾತುಗಳಿಂದ ಪ್ರಕಟಿಸುವುದಕ್ಕಾಗಿ ಯೂದ ಮತ್ತು ಸೀಲರನ್ನು ಕಳುಹಿಸುತ್ತಿದ್ದೇವೆ.</verse>
				<verse number="28">ಈ ಅಗತ್ಯವಾದವುಗಳನ್ನು ಬಿಟ್ಟು ಬೇರೆಯವುಗಳನ್ನು ನಿಮ್ಮ ಮೇಲೆ ಹೊರೆಯಾಗಿ ಹಾಕಬಾರದೆಂಬುದು, ಪವಿತ್ರಾತ್ಮರಿಗೂ ನಮಗೂ ಒಳ್ಳೆಯದೆಂದು ತೋಚಿತು.</verse>
				<verse number="29">ದೇವರಲ್ಲದವುಗಳಿಗೆ ಅರ್ಪಿತವಾದ ಮಲಿನ ಆಹಾರದಿಂದಲೂ ರಕ್ತದಿಂದಲೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ಅನೈತಿಕತೆಯಿಂದಲೂ ದೂರವಿರಬೇಕು. ಇವುಗಳಿಂದ ನಿಮ್ಮನ್ನು ಕಾಪಾಡಿಕೊಳ್ಳುವುದರಿಂದ ನಿಮಗೆ ಒಳಿತಾಗುವುದು. ನಿಮಗೆ ಶುಭವಾಗಲಿ.</verse>
				<verse number="30">ಅವರು ಹೊರಟುಹೋಗಿ ಅಂತಿಯೋಕ್ಯವನ್ನು ತಲುಪಿದರು. ಅಲ್ಲಿ ದೇವಸಭೆಯನ್ನು ಕೂಡಿಸಿ ಆ ಪತ್ರವನ್ನು ಕೊಟ್ಟರು.</verse>
				<verse number="31">ಸಭೆಯವರು ಅದನ್ನು ಓದಿ ಅದರಲ್ಲಿದ್ದ ಆದರಣೆ ಮಾತುಗಳಿಗಾಗಿ ಸಂತೋಷಪಟ್ಟರು.</verse>
				<verse number="32">ಯೂದ ಮತ್ತು ಸೀಲರು ಸ್ವತಃ ಪ್ರವಾದಿಗಳಾಗಿದ್ದುದರಿಂದ ಅಲ್ಲಿದ್ದ ವಿಶ್ವಾಸಿಗಳನ್ನು ಅನೇಕ ಬುದ್ಧಿವಾದಗಳಿಂದ ಬಲಪಡಿಸಿದರು.</verse>
				<verse number="33">ಅವರು ಕೆಲವು ದಿನಗಳು ಇದ್ದ ನಂತರ ಅಲ್ಲಿಯ ವಿಶ್ವಾಸಿಗಳನ್ನು ಬೀಳ್ಕೊಟ್ಟು ತಮ್ಮನ್ನು ಕಳುಹಿಸಿಕೊಟ್ಟವರ ಬಳಿಗೆ ಹಿಂದಿರುಗಿದರು.</verse>
				<verse number="34">ಸೀಲನು ಅಲ್ಲಿಯೇ ಇರಲು ತೀರ್ಮಾನಿಸಿದನು.</verse>
				<verse number="35">ಆದರೆ ಪೌಲನು ಮತ್ತು ಬಾರ್ನಬರು ಅಂತಿಯೋಕ್ಯದಲ್ಲಿಯೇ ಉಳಿದುಕೊಂಡು ಅನೇಕರಿಗೆ ಕರ್ತ ಯೇಸುವಿನ ವಾಕ್ಯವನ್ನು ಬೋಧಿಸುತ್ತಾ ಸುವಾರ್ತೆ ಸಾರಿದರು.</verse>
				<verse number="36">ಕೆಲವು ದಿನಗಳ ನಂತರ ಪೌಲನು ಬಾರ್ನಬನಿಗೆ, “ನಾವು ಕರ್ತ ಯೇಸುವಿನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ಹೋಗಿ ಅಲ್ಲಿದ್ದ ವಿಶ್ವಾಸಿಗಳನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿಕೊಂಡು ಬರೋಣ,” ಎಂದು ಹೇಳಿದನು.</verse>
				<verse number="37">ಬಾರ್ನಬನು ಮಾರ್ಕ ಎಂಬ ಹೆಸರಿನ ಯೋಹಾನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಹೋಗಬೇಕೆಂದು ಬಯಸಿದನು,</verse>
				<verse number="38">ಆದರೆ ಪಂಫುಲ್ಯದಲ್ಲಿ ತಮ್ಮನ್ನು ಬಿಟ್ಟು ತಮ್ಮೊಂದಿಗೆ ಸೇವೆಗೆ ಸಹಕರಿಸದೆ ಹೋದ ಮಾರ್ಕನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ಪೌಲನು ಭಾವಿಸಿದನು.</verse>
				<verse number="39">ಇದರಿಂದ ಅವರಲ್ಲಿ ತೀವ್ರ ಭಿನ್ನಾಭಿಪ್ರಾಯ ಉಂಟಾಗಿ ಅವರು ಒಬ್ಬರಿಂದೊಬ್ಬರು ಪ್ರತ್ಯೇಕವಾಗಿ ಹೋಗಬೇಕಾಯಿತು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸೈಪ್ರಸ್ ದ್ವೀಪಕ್ಕೆ ಪ್ರಯಾಣಮಾಡಿದನು,</verse>
				<verse number="40">ಆದರೆ ಪೌಲನು ಸೀಲನನ್ನು ಆರಿಸಿಕೊಂಡು ಹೋದನು. ವಿಶ್ವಾಸಿಗಳಿಂದ ಅವನನ್ನು ಕರ್ತ ಯೇಸುವಿನ ಕೃಪೆಗೆ ಒಪ್ಪಿಸಿ, ಕಳುಹಿಸಿಕೊಟ್ಟುರು.</verse>
				<verse number="41">ಪೌಲನು ಸಿರಿಯ ಮತ್ತು ಕಿಲಿಕ್ಯ ಸೀಮೆಗಳನ್ನು ಹಾದುಹೋಗುತ್ತಾ, ಅಲ್ಲಿದ್ದ ಸಭೆಗಳ ನಂಬಿಕೆಯನ್ನು ಬಲಪಡಿಸಿದನು.</verse>
			</chapter>
			<chapter number="16">
				<verse number="1">ಪೌಲನು ದೆರ್ಬೆಗೂ ಲುಸ್ತ್ರಕ್ಕೂ ಬಂದನು. ಅಲ್ಲಿ, ತಿಮೊಥೆಯನೆಂಬ ಹೆಸರಿನ ಒಬ್ಬ ಶಿಷ್ಯನಿದ್ದನು. ಅವನ ತಾಯಿ ವಿಶ್ವಾಸಿಯಾಗಿದ್ದ ಯೆಹೂದ್ಯ ಸ್ತ್ರೀ. ಆದರೆ ಅವನ ತಂದೆ ಒಬ್ಬ ಗ್ರೀಕನಾಗಿದ್ದನು.</verse>
				<verse number="2">ಲುಸ್ತ್ರ ಹಾಗೂ ಇಕೋನ್ಯಗಳಲ್ಲಿದ್ದ ಸಹೋದರರು ತಿಮೊಥೆಯನ ಬಗ್ಗೆ ಒಳ್ಳೆಯ ಸಾಕ್ಷಿ ಹೇಳುತ್ತಿದ್ದರು.</verse>
				<verse number="3">ತಿಮೊಥೆಯನನ್ನು ಪೌಲನು ತನ್ನೊಂದಿಗೆ ಪ್ರಯಾಣದಲ್ಲಿ ಕರೆದುಕೊಂಡು ಹೋಗಬೇಕೆಂದು ಅಪೇಕ್ಷಿಸಿ, ಆ ಪ್ರದೇಶದಲ್ಲಿ ನೆಲೆಸಿದ ಯೆಹೂದ್ಯರ ನಿಮಿತ್ತ ತಿಮೊಥೆಯನಿಗೆ ಸುನ್ನತಿ ಮಾಡಿಸಿದನು. ಏಕೆಂದರೆ ಅವನ ತಂದೆ ಗ್ರೀಕನು ಎಂಬುದನ್ನು ಅವರೆಲ್ಲರೂ ತಿಳಿದಿದ್ದರು.</verse>
				<verse number="4">ಅವರು ಪಟ್ಟಣಗಳಲ್ಲಿ ಪ್ರಯಾಣಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರು, ಹಿರಿಯರು ತೆಗೆದುಕೊಂಡ ತೀರ್ಮಾನಗಳನ್ನು ಜನರು ಅನುಸರಿಸಿ ನಡೆಯುವಂತೆ ಅವರಿಗೆ ಬೋಧಿಸಿದರು.</verse>
				<verse number="5">ಹೀಗೆ ಸಭೆಗಳು ವಿಶ್ವಾಸದಲ್ಲಿ ಬಲಗೊಂಡು ಸಂಖ್ಯೆಯಲ್ಲಿ ಅನುದಿನ ಹೆಚ್ಚುತ್ತಾ ಬಂದವು.</verse>
				<verse number="6">ಏಷ್ಯಾ ಪ್ರಾಂತದಲ್ಲಿ ಸುವಾರ್ತೆ ಸಾರಬಾರದೆಂದು ಪವಿತ್ರಾತ್ಮ ತಡೆದದ್ದರಿಂದ ಪೌಲ ಮತ್ತು ಅವನ ಜೊತೆಯವರು ಫ್ರುಗ್ಯ ಹಾಗೂ ಗಲಾತ್ಯ ಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು.</verse>
				<verse number="7">ಮೂಸ್ಯದ ಸೀಮೆಯನ್ನು ತಲುಪಿದಾಗ ಬಿಥೂನ್ಯವನ್ನು ಪ್ರವೇಶಿಸಲು ಪ್ರಯತ್ನಿಸಿದರು, ಆದರೆ ಯೇಸುವಿನ ಆತ್ಮ ಅಲ್ಲಿಗೆ ಹೋಗಲು ಸಹ ಅವರನ್ನು ಅನುಮತಿಸಲಿಲ್ಲ.</verse>
				<verse number="8">ಆದ್ದರಿಂದ ಅವರು ಮೂಸ್ಯವನ್ನು ದಾಟಿ ತ್ರೋವಕ್ಕೆ ಬಂದರು.</verse>
				<verse number="9">ಆ ರಾತ್ರಿಯಲ್ಲಿ ಪೌಲನಿಗೆ ಒಂದು ದರ್ಶನವಾಯಿತು. ಅದರಲ್ಲಿ ಮಕೆದೋನ್ಯದವನೊಬ್ಬನು ನಿಂತುಕೊಂಡು, “ಮಕೆದೋನ್ಯ ದಾಟಿ ಬಂದು ನಮಗೆ ಸಹಾಯಮಾಡು,” ಎಂದು ಅವನನ್ನು ಬೇಡಿಕೊಂಡನು.</verse>
				<verse number="10">ಪೌಲನಿಗೆ ಈ ದರ್ಶನವಾದಾಗ ಆ ಜನರಿಗೆ ಸುವಾರ್ತೆ ಸಾರಲು ದೇವರು ನಮ್ಮನ್ನು ಕರೆಯುತ್ತಿದ್ದಾರೆಂದು ತಿಳಿದುಕೊಂಡು ಕೂಡಲೇ ಮಕೆದೋನ್ಯಕ್ಕೆ ಹೊರಡಲು ಸಿದ್ಧರಾದೆವು.</verse>
				<verse number="11">ನಾವು ನೌಕೆ ಹತ್ತಿ ತ್ರೋವದಿಂದ ನೇರವಾಗಿ ಸಮೊಥ್ರಾಕೆಗೆ ಹೊರಟೆವು. ಮರುದಿನ ನೆಯಾಪೊಲಿಗೆ ತಲುಪಿದೆವು.</verse>
				<verse number="12">ಅಲ್ಲಿಂದ ಮಕೆದೋನ್ಯ ಪ್ರಾಂತದ ಪ್ರಮುಖ ಪಟ್ಟಣವಾದ ಫಿಲಿಪ್ಪಿಗೆ ಬಂದೆವು. ಇದು ರೋಮಿನ ಪ್ರವಾಸ ಸ್ಥಳವಾಗಿತ್ತು. ನಾವು ಆ ಪಟ್ಟಣದಲ್ಲಿ ಕೆಲವು ದಿನ ಉಳಿದುಕೊಂಡೆವು.</verse>
				<verse number="13">ಪ್ರಾರ್ಥನೆಯ ಸ್ಥಳ ಸಿಕ್ಕಬಹುದೆಂದು ಭಾವಿಸಿ ಸಬ್ಬತ್ ದಿನದಂದು ಪಟ್ಟಣದ ದ್ವಾರದ ಹೊರಗಿದ್ದ ನದಿತೀರಕ್ಕೆ ಹೋದೆವು. ಅಲ್ಲಿ ಕುಳಿತುಕೊಂಡು ಕೂಡಿಬಂದಿದ್ದ ಮಹಿಳೆಯರೊಂದಿಗೆ ಮಾತನಾಡಲು ಪ್ರಾರಂಭಿಸಿದೆವು.</verse>
				<verse number="14">ಅವರಲ್ಲಿ ಒಬ್ಬ ಮಹಿಳೆಯ ಹೆಸರು ಲುದ್ಯ ಎಂದಿತ್ತು. ಆಕೆ ಥುವತೈರ ಊರಿನವಳೂ ಕೆನ್ನೀಲಿ ಬಣ್ಣದ ಬಟ್ಟೆಗಳ ವ್ಯಾಪಾರಿಯೂ ದೇವರನ್ನು ಆರಾಧಿಸುವವಳೂ ಆಗಿದ್ದಳು. ಪೌಲನು ಹೇಳಿದ್ದನ್ನು ಲಕ್ಷ್ಯಕೊಡುವಂತೆ ಕರ್ತ ಯೇಸು ಆಕೆಯ ಹೃದಯವನ್ನು ತೆರೆದರು.</verse>
				<verse number="15">ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಹೊಂದಿದಾಗ, “ನಾನು ಕರ್ತ ಯೇಸುವಿಗೆ ನಂಬಿಗಸ್ತಳೆಂದು ನೀವು ತೀರ್ಮಾನಿಸಿಕೊಂಡರೆ, ಬಂದು ನನ್ನ ಮನೆಯಲ್ಲಿ ತಂಗಿರಿ,” ಎಂದು ನಮ್ಮನ್ನು ಒತ್ತಾಯ ಮಾಡಿದಳು.</verse>
				<verse number="16">ಒಂದು ದಿನ ನಾವು ಪ್ರಾರ್ಥನೆಯ ಸ್ಥಳಕ್ಕೆ ಹೋಗುತ್ತಿದ್ದೆವು, ಆಗ ಭವಿಷ್ಯ ಹೇಳುವ ದುರಾತ್ಮವುಳ್ಳ ದಾಸಿಯೊಬ್ಬಳು ನಮ್ಮನ್ನು ಭೇಟಿಯಾದಳು. ಭವಿಷ್ಯ ಹೇಳುವುದರಿಂದ ಆಕೆ ತನ್ನ ಯಜಮಾನನಿಗೆ ಬಹಳ ಹಣ ಸಂಪಾದಿಸುತ್ತಿದ್ದಳು.</verse>
				<verse number="17">ಅವಳು, “ಈ ಮನುಷ್ಯರು ಮಹೋನ್ನತ ದೇವರ ದಾಸರು. ರಕ್ಷಣೆಯ ಮಾರ್ಗವನ್ನು ನಿಮಗೆ ಸಾರುತ್ತಾರೆ,” ಎಂದು ಗಟ್ಟಿಯಾಗಿ ಕೂಗುತ್ತಾ ಪೌಲನ ಮತ್ತು ನಮ್ಮ ಹಿಂದೆಯೇ ಬಂದಳು.</verse>
				<verse number="18">ಹೀಗೆ ಬಹಳ ದಿನ ಮಾಡುತ್ತಲೇ ಇದ್ದಳು. ಆದರೆ ಪೌಲನು ಬಹು ಬೇಸರಗೊಂಡು ಹಿಂದಿರುಗಿ ಆ ದುರಾತ್ಮಕ್ಕೆ, “ಇವಳನ್ನು ಈಗಲೇ ಬಿಟ್ಟು ಹೊರಗೆ ಬರಬೇಕೆಂದು ಕ್ರಿಸ್ತ ಯೇಸುವಿನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ,” ಎಂದು ಹೇಳಲು, ಅದೇ ಗಳಿಗೆಯಲ್ಲಿ ಆ ದುರಾತ್ಮವು ಆಕೆಯನ್ನು ಬಿಟ್ಟುಹೋಯಿತು.</verse>
				<verse number="19">ಅವಳ ಯಜಮಾನರು ತಾವು ಹಣ ಸಂಪಾದಿಸುವ ನಿರೀಕ್ಷೆಯೇ ಹೋಯಿತೆಂದು ತಿಳಿದು, ಪೌಲ ಸೀಲರನ್ನು ಹಿಡಿದು ಸಂತೆಸ್ಥಳದಲ್ಲಿದ್ದ ಅಧಿಕಾರಿಗಳ ಮುಂದೆ ವಿಚಾರಣೆಗಾಗಿ ಎಳೆದುಕೊಂಡು ಹೋದರು.</verse>
				<verse number="20">ಅವರನ್ನು ನ್ಯಾಯಾಧಿಪತಿಗಳ ಮುಂದೆ ನಿಲ್ಲಿಸಿ, “ಯೆಹೂದ್ಯರಾಗಿರುವ ಇವರು, ನಮ್ಮ ಪಟ್ಟಣದಲ್ಲಿ ಬಹು ಗಲಿಬಿಲಿ ಮಾಡುತ್ತಿದ್ದಾರೆ.</verse>
				<verse number="21">ರೋಮನವರಾದ ನಾವು ಸ್ವೀಕರಿಸಲೂ ಇಲ್ಲವೆ ಅನುಸರಿಸಲೂ ಆಗದಂಥಾ ಆಚಾರಗಳನ್ನು ಪ್ರಕಟಿಸುತ್ತಿದ್ದಾರೆ,” ಎಂದರು.</verse>
				<verse number="22">ಪೌಲ, ಸೀಲರಿಗೆ ವಿರೋಧವಾಗಿ ಜನಸಮೂಹವೆಲ್ಲಾ ಕೂಡಿಕೊಂಡಿತು. ನ್ಯಾಯಾಧಿಪತಿಗಳು ಪೌಲ, ಸೀಲರ ಬಟ್ಟೆಗಳನ್ನು ಕಿತ್ತುಹಾಕಿಸಿ ಛಡಿಗಳಿಂದ ಹೊಡೆಯಬೇಕೆಂದು ಆಜ್ಞಾಪಿಸಿದರು.</verse>
				<verse number="23">ಅವರನ್ನು ಛಡಿ ಏಟುಗಳಿಂದ ಬಹಳವಾಗಿ ಥಳಿಸಿ ಸೆರೆಮನೆಗೆ ಹಾಕಲಾಯಿತು. ಅವರನ್ನು ಜಾಗರೂಕತೆಯಿಂದ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಆಜ್ಞಾಪಿಸಲಾಯಿತು.</verse>
				<verse number="24">ಇಂಥಾ ಆಜ್ಞೆಯನ್ನು ಪಡೆದು, ಅವನು ಸೆರೆಮನೆಯ ಒಳಕೋಣೆಯಲ್ಲಿ ಅವರನ್ನು ಹಾಕಿ ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಂಧಿಸಿದರು.</verse>
				<verse number="25">ಸುಮಾರು ಮಧ್ಯರಾತ್ರಿಯಲ್ಲಿ ಪೌಲ, ಸೀಲರು ಪ್ರಾರ್ಥನೆ ಮಾಡುವವರಾಗಿ ಸ್ತುತಿಗೀತೆಯಿಂದ ದೇವರಿಗೆ ಸ್ತೋತ್ರ ಮಾಡುತ್ತಿದ್ದರು. ಸೆರೆಮನೆಯಲ್ಲಿ ಇತರ ಕೈದಿಗಳು ಅದನ್ನು ಆಲಿಸುತ್ತಿದ್ದರು.</verse>
				<verse number="26">ಆಗ ತಕ್ಷಣವೇ ಭೀಕರವಾದ ಭೂಕಂಪವಾಗಿ ಸೆರೆಮನೆಯ ಅಸ್ತಿವಾರವು ಕದಲಿತು. ಕೂಡಲೇ ಸೆರೆಮನೆಯ ಎಲ್ಲಾ ಬಾಗಿಲುಗಳು ತೆರೆದವು. ಎಲ್ಲರನ್ನು ಬಂಧಿಸಿದ್ದ ಸರಪಣಿಗಳು ಸಡಿಲಗೊಂಡವು.</verse>
				<verse number="27">ಸೆರೆಮನೆಯ ಅಧಿಕಾರಿ ಎಚ್ಚತ್ತುಕೊಂಡು, ಸೆರೆಮನೆಯ ಬಾಗಿಲುಗಳು ತೆರೆದಿರುವುದನ್ನು ಕಂಡು, ಸೆರೆಯಾಳುಗಳು ತಪ್ಪಿಸಿಕೊಂಡು ಹೋಗಿರಬಹುದೆಂದು ಭಾವಿಸಿ, ತನ್ನ ಖಡ್ಗವನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು.</verse>
				<verse number="28">ಆದರೆ ಪೌಲನು, “ನೀನು ಹಾನಿ ಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲಿಯೇ ಇದ್ದೇವೆ,” ಎಂದು ಗಟ್ಟಿಯಾಗಿ ಕೂಗಿದನು.</verse>
				<verse number="29">ಅವನು ದೀಪ ತರಬೇಕೆಂದು ಹೇಳಿ ಓಡಿಹೋಗಿ ಭಯದಿಂದ ನಡುಗುತ್ತಾ ಪೌಲ, ಸೀಲರ ಮುಂದೆ ಅಡ್ಡಬಿದ್ದನು.</verse>
				<verse number="30">ಆಮೇಲೆ ಅವರನ್ನು ಹೊರಗೆ ಕರೆದುಕೊಂಡು ಬಂದು, “ಮಹನೀಯರೇ, ನಾನು ರಕ್ಷಣೆ ಹೊಂದಲು ಏನು ಮಾಡಬೇಕು?” ಎಂದನು.</verse>
				<verse number="31">“ಕರ್ತ ಯೇಸುವಿನಲ್ಲಿ ವಿಶ್ವಾಸವನ್ನಿಡು. ನೀನು ರಕ್ಷಣೆ ಹೊಂದುವೆ, ನಿನ್ನ ಮನೆಯವರೂ ರಕ್ಷಣೆಹೊಂದುವರು,” ಎಂದರು.</verse>
				<verse number="32">ಆಮೇಲೆ ಅವರು ಅವನಿಗೂ ಅವನ ಮನೆಯವರೆಲ್ಲರಿಗೂ ಕರ್ತ ಯೇಸುವಿನ ಸುವಾರ್ತೆಯನ್ನು ತಿಳಿಸಿದರು.</verse>
				<verse number="33">ಆ ಅಧಿಕಾರಿ, ರಾತ್ರಿಯ ಅದೇ ಗಳಿಗೆಯಲ್ಲಿ ಪೌಲ, ಸೀಲರನ್ನು ಕರೆದುಕೊಂಡು ಹೋಗಿ, ಅವರ ಗಾಯಗಳನ್ನು ತೊಳೆದನು. ಆಮೇಲೆ ಅವನೂ ಅವನ ಮನೆಯವರೆಲ್ಲರೂ ದೀಕ್ಷಾಸ್ನಾನವನ್ನು ಹೊಂದಿದರು.</verse>
				<verse number="34">ಸೆರೆಮನೆಯ ಅಧಿಕಾರಿ ಅವರನ್ನು ತನ್ನ ಮನೆಗೆ ಕರೆದುಕೊಂಡು ಬಂದು ಅವರಿಗೆ ಊಟಬಡಿಸಿದನು ಮತ್ತು ಅವನೂ ತನ್ನ ಮನೆಯವರೆಲ್ಲರೂ ದೇವರಲ್ಲಿ ವಿಶ್ವಾಸವಿಟ್ಟಿದ್ದಕ್ಕಾಗಿ ಉಲ್ಲಾಸಗೊಂಡನು.</verse>
				<verse number="35">ಬೆಳಗಾದ ತರುವಾಯ ನ್ಯಾಯಾಧಿಪತಿಗಳು ತಮ್ಮ ಅಧಿಕಾರಿಗಳನ್ನು ಸೆರೆಮನೆಯ ಅಧಿಕಾರಿಯ ಬಳಿಗೆ ಕಳುಹಿಸಿ, “ಆ ಮನುಷ್ಯರನ್ನು ಬಿಡುಗಡೆಮಾಡು,” ಎಂದು ತಿಳಿಸಿದರು.</verse>
				<verse number="36">ಸೆರೆಮನೆಯ ಅಧಿಕಾರಿ ಪೌಲನಿಗೆ, “ನಿನ್ನನ್ನು ಸೀಲನನ್ನು ಬಿಟ್ಟುಬಿಡಲು ನ್ಯಾಯಾಧಿಪತಿಗಳು ಕಳುಹಿಸಿದ್ದಾರೆ. ಈಗ ನೀವು ಸಮಾಧಾನದಿಂದ ಹೋಗಬಹುದು,” ಎಂದು ಪ್ರಕಟಿಸಿದನು.</verse>
				<verse number="37">ಆದರೆ ಪೌಲನು ಅಧಿಕಾರಿಗಳಿಗೆ, “ನಾವು ರೋಮ್ ಪೌರರಾಗಿದ್ದು ಯಾವ ನ್ಯಾಯವಿಚಾರಣೆ ಮಾಡದೇ ಬಹಿರಂಗವಾಗಿ ನಮ್ಮನ್ನು ಛಡಿಯಿಂದ ಹೊಡೆಸಿ, ನಮ್ಮನ್ನು ಸೆರೆಮನೆಗೆ ತಳ್ಳಿದ್ದಾರೆ. ಈಗ ರಹಸ್ಯವಾಗಿ ನಮ್ಮನ್ನು ಕಳುಹಿಸಿಬಿಡಬೇಕೆಂದಿದ್ದಾರೋ? ಇಲ್ಲ, ಅವರು ತಾವೇ ಬಂದು ನಮ್ಮನ್ನು ಹೊರಗೆ ಕರೆದುಕೊಂಡು ಹೋಗಲಿ,” ಎಂದನು.</verse>
				<verse number="38">ಅಧಿಕಾರಿಗಳು ಹೋಗಿ ಇದನ್ನು ನ್ಯಾಯಾಧಿಪತಿಗಳಿಗೆ ವರದಿಮಾಡಿದರು. ಪೌಲ, ಸೀಲರು ರೋಮ್ ಪೌರರೆಂದು ಕೇಳಿ ಅವರು ಗಾಬರಿಗೊಂಡರು.</verse>
				<verse number="39">ಆದುದರಿಂದ ನ್ಯಾಯಾಧಿಪತಿಗಳು ಬಂದು ಶಾಂತಪಡಿಸಿ ಸೆರೆಮನೆಯಿಂದ ಅವರನ್ನು ಹೊರಗೆ ಕರೆದುಕೊಂಡು ಹೋಗಿ, ಪಟ್ಟಣವನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.</verse>
				<verse number="40">ಪೌಲ, ಸೀಲರು ಸೆರೆಮನೆಯಿಂದ ಹೊರಗೆ ಬಂದ ಮೇಲೆ ಲುದ್ಯಳ ಮನೆಗೆ ಹೋಗಿ, ಅಲ್ಲಿ ಸಹೋದರರನ್ನು ಭೇಟಿಯಾಗಿ ಅವರನ್ನು ಪ್ರೋತ್ಸಾಹಿಸಿ, ಅಲ್ಲಿಂದ ಹೊರಟು ಹೋದರು.</verse>
			</chapter>
			<chapter number="17">
				<verse number="1">ಅವರು ಅಂಫಿಪೊಲಿ ಮತ್ತು ಅಪೊಲೋನ್ಯ ಮಾರ್ಗವಾಗಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.</verse>
				<verse number="2">ಪೌಲನು ತನ್ನ ವಾಡಿಕೆಯಂತೆ ಮೂರು ಸಬ್ಬತ್ ದಿನಗಳಂದು ಅವರ ಬಳಿ ಹೋಗಿ, ಅವರಲ್ಲಿ ಪವಿತ್ರ ವೇದಗಳ ಬಗ್ಗೆ ವಾದಿಸಿ,</verse>
				<verse number="3">ಕ್ರಿಸ್ತ ಯೇಸು ಯಾತನೆಯನ್ನು ಅನುಭವಿಸಿ, ಸತ್ತವರೊಳಗಿಂದ ಜೀವಂತವಾಗಿ ಎದ್ದು ಬರಬೇಕಾಗಿತ್ತೆಂಬುದನ್ನು ವಿವರಿಸಿ, “ನಾನು ನಿಮಗೆ ಪ್ರಕಟಿಸುತ್ತಿರುವ ಯೇಸುವೇ ಆ ಕ್ರಿಸ್ತ,” ಎಂದು ಅವನು ಅವರ ಮುಂದೆ ಬಹಿರಂಗಪಡಿಸಿದನು.</verse>
				<verse number="4">ಅವರಲ್ಲಿ ಕೆಲವರು ದೇವಭಕ್ತಿಯುಳ್ಳ ಗ್ರೀಕರೂ ಪ್ರಮುಖರಾಗಿದ್ದ ಮಹಿಳೆಯರೂ ದೊಡ್ಡ ಸಂಖ್ಯೆಯಲ್ಲಿ ಒಡಂಬಟ್ಟವರಾಗಿ ಪೌಲ, ಸೀಲರನ್ನು ಸೇರಿಕೊಂಡರು.</verse>
				<verse number="5">ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಬೀದಿಗಳಲ್ಲಿ ತಿರುಗಾಡುವ ಕೆಲವು ದುಷ್ಟವ್ಯಕ್ತಿಗಳನ್ನು ಕೂಡಿಸಿ ಪಟ್ಟಣದಲ್ಲಿ ಗಲಭೆ ಎಬ್ಬಿಸಿದರು. ಜನಸಮೂಹದ ಮುಂದೆ ಪೌಲ, ಸೀಲರನ್ನು ಎಳೆದು ತರುವಂತೆ ಅವರನ್ನು ಹುಡುಕುತ್ತಾ ಯಾಸೋನ ಎಂಬುವನ ಮನೆಯನ್ನು ಮುತ್ತಿದರು.</verse>
				<verse number="6">ಆದರೆ ಅಲ್ಲಿ ಅವರಿಲ್ಲದಿರುವುದನ್ನು ಕಂಡು ಅವರು ಯಾಸೋನನನ್ನೂ ಕೆಲವು ಸಹೋದರರನ್ನೂ ಎಳೆದುಕೊಂಡು ಬಂದು ಪಟ್ಟಣದ ಅಧಿಕಾರಿಗಳ ಮುಂದೆ ನಿಲ್ಲಿಸಿ, “ಲೋಕವನ್ನು ತಲೆಕೆಳಗೆ ಮಾಡಿರುವ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.</verse>
				<verse number="7">ಯಾಸೋನನು ಅವರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡಿದ್ದಾನೆ. ಅವರು ಯೇಸು ಎಂಬ ಬೇರೊಬ್ಬ ಅರಸನಿದ್ದಾನೆ ಎಂದು ಹೇಳುತ್ತಾ ಕೈಸರನ ವಿರುದ್ಧವಾಗಿ ನಡೆಯುತ್ತಾರೆ,” ಎಂದು ಗಟ್ಟಿಯಾಗಿ ಕೂಗಿದರು.</verse>
				<verse number="8">ಇದನ್ನು ಕೇಳಿದ ಜನರೂ ಪಟ್ಟಣದ ಅಧಿಕಾರಿಗಳೂ ಕಳವಳಗೊಂಡರು.</verse>
				<verse number="9">ಆಮೇಲೆ ಯಾಸೋನನಿಂದಲೂ ಮತ್ತಿತರರಿಂದಲೂ ಜಾಮೀನು ಪಡೆದು ಅವರನ್ನು ಬಿಡುಗಡೆ ಮಾಡಿದರು.</verse>
				<verse number="10">ರಾತ್ರಿಯಾದ ಕೂಡಲೇ, ಸಹೋದರರು ಪೌಲ, ಸೀಲರನ್ನು ಬೆರೋಯಕ್ಕೆ ಕಳುಹಿಸಿದರು. ಅಲ್ಲಿಗೆ ಅವರು ತಲುಪಿದಾಗ ಅಲ್ಲಿಯೂ ಯೆಹೂದ್ಯರ ಸಭಾಮಂದಿರಕ್ಕೆ ಹೋದರು.</verse>
				<verse number="11">ಬೆರೋಯದಲ್ಲಿದ್ದವರು ಥೆಸಲೋನಿಕದವರಿಗಿಂತ ಹೆಚ್ಚು ಸದ್ಗುಣವುಳ್ಳವರು; ಅವರು ವಾಕ್ಯವನ್ನು ಅತ್ಯಾಸಕ್ತಿಯಿಂದ ಸ್ವೀಕರಿಸಿ, ಇವರು ಹೇಳಿದ್ದು ಸರಿಯಾದದ್ದೋ ಏನೋ ಎಂದು ಅವರು ಪ್ರತಿದಿನವೂ ಪವಿತ್ರ ವೇದಗಳನ್ನು ಪರೀಕ್ಷಿಸುತ್ತಿದ್ದರು.</verse>
				<verse number="12">ಆದ್ದರಿಂದ ಅವರಲ್ಲಿ ಅನೇಕರು ವಿಶ್ವಾಸ ಹೊಂದಿದರು. ಅನೇಕ ಗ್ರೀಕ್ ಪುರುಷರೂ ಪ್ರಮುಖ ಸ್ತ್ರೀಯರೂ ವಿಶ್ವಾಸವನ್ನಿಟ್ಟರು.</verse>
				<verse number="13">ಆದರೆ ಪೌಲನು ದೇವರ ವಾಕ್ಯವನ್ನು ಬೆರೋಯದಲ್ಲಿ ಬೋಧಿಸುತ್ತಿದ್ದಾನೆಂಬುದು ಥೆಸಲೋನಿಕದಲ್ಲಿದ್ದ ಯೆಹೂದ್ಯರಿಗೆ ತಿಳಿದುಬಂದಾಗ ಅವರು ಅಲ್ಲಿಗೂ ಬಂದು, ಜನಸಮೂಹವನ್ನು ಪ್ರಚೋದಿಸಿ ಗಲಭೆ ಎಬ್ಬಿಸಿದರು.</verse>
				<verse number="14">ಆದ್ದರಿಂದ ಸಹೋದರರು ಕೂಡಲೇ ಪೌಲನನ್ನು ಸಮುದ್ರ ತೀರಕ್ಕೆ ಕಳುಹಿಸಿಬಿಟ್ಟರು. ಆದರೆ ಸೀಲ ಮತ್ತು ತಿಮೊಥೆ ಬೆರೋಯದಲ್ಲಿಯೇ ಉಳಿದುಕೊಂಡರು.</verse>
				<verse number="15">ಪೌಲನನ್ನು ಬಿಟ್ಟು ಬರಲು ಹೋದವರು ಅವನ ಜೊತೆ ಅಥೇನೆ ಪಟ್ಟಣದವರೆಗೆ ಹೋದರು. ಸೀಲ ಮತ್ತು ತಿಮೊಥೆಯರು ಸಾಧ್ಯವಾದಷ್ಟು ಬೇಗನೇ ತನ್ನ ಬಳಿ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಪಡೆದು, ಅವರು ಬೆರೋಯಕ್ಕೆ ಹಿಂತಿರುಗಿ ಹೋದರು.</verse>
				<verse number="16">ಪೌಲನು ಅವರಿಗಾಗಿ ಕಾಯುತ್ತಾ ಅಥೇನೆಯಲ್ಲಿ ಇದ್ದಾಗ, ಆ ಪಟ್ಟಣವು ವಿಗ್ರಹಗಳಿಂದ ತುಂಬಿಕೊಂಡಿದ್ದನ್ನು ಕಂಡು, ಅವನ ಆತ್ಮವು ಅವನೊಳಗೆ ಕುದಿಯಿತು.</verse>
				<verse number="17">ಆದ್ದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರೊಂದಿಗೂ ದೇವಭಕ್ತಿಯುಳ್ಳ ಗ್ರೀಕರೊಂದಿಗೂ ಅಲ್ಲದೆ ಬಹಿರಂಗ ಸಂತೆಪೇಟೆ ಸ್ಥಳದಲ್ಲಿ ದಿನದಿನವೂ ಬರುತ್ತಿದ್ದ ಜನರೊಂದಿಗೂ ಚರ್ಚೆ ಮಾಡುತ್ತಿದ್ದನು.</verse>
				<verse number="18">ಆದರೆ ಎಪಿಕೂರಿಯರು ಹಾಗೂ ಸ್ತೋಯಿಕರು ಎಂಬ ತತ್ವಜ್ಞಾನಿಗಳಲ್ಲಿ ಸಹ ಕೆಲವರು ಅವನೊಂದಿಗೆ ವಾಗ್ವಾದ ಮಾಡಲು ಪ್ರಾರಂಭಿಸಿ, “ಈ ಬಾಯಿಬಡುಕ ಏನು ಹೇಳಬೇಕೆಂದಿದ್ದಾನೆ?” ಎಂದರು. ಇನ್ನೂ ಕೆಲವರು, “ಅವನು ವಿದೇಶದ ದೇವರುಗಳ ಬಗ್ಗೆ ಪ್ರಸ್ತಾಪಿಸುವಂತೆ ತೋರುತ್ತದೆ,” ಎಂದರು. ಏಕೆಂದರೆ ಅವನು ಯೇಸುವನ್ನು ಮತ್ತು ಪುನರುತ್ಥಾನವನ್ನು ಕುರಿತ ಸುವಾರ್ತೆ ಸಾರುತ್ತಿದ್ದನು.</verse>
				<verse number="19">ಆಗ ಅವರು ಪೌಲನನ್ನು ಕರೆದುಕೊಂಡು ಅರಿಯೊಪಾಗ ಎಂಬ ಸ್ಥಳಕ್ಕೆ ಬಂದು, “ನೀನು ಹೇಳುತ್ತಿರುವ ಈ ಹೊಸ ಉಪದೇಶ ಏನೆಂಬುದನ್ನು ನಾವು ತಿಳಿದುಕೊಳ್ಳಬಹುದೋ?</verse>
				<verse number="20">ನೀನು ಕೆಲವು ವಿಚಿತ್ರವಾದ ವಿಚಾರಗಳನ್ನು ನಮಗೆ ಹೇಳುತ್ತಿರುವೆ. ಆದ್ದರಿಂದ ಅವುಗಳ ಅರ್ಥವನ್ನು ತಿಳಿಯಬಯಸುತ್ತೇವೆ,” ಎಂದರು.</verse>
				<verse number="21">ಅಲ್ಲಿ ನೆಲೆಸಿದ್ದ ಅಥೇನೆಯ ನಿವಾಸಿಗಳೂ ವಿದೇಶಿಯರೂ ಹೊಸ ಹೊಸ ವಿಷಯಗಳನ್ನು ಹೇಳುವುದಕ್ಕೂ ಕೇಳುವುದಕ್ಕೂ ಹೊರತು ಇತರ ವಿಷಯಗಳಲ್ಲಿ ಸಮಯ ಕಳೆಯುತ್ತಿರಲಿಲ್ಲ.</verse>
				<verse number="22">ಅರಿಯೊಪಾಗದ ಗುಂಪಿನ ಮುಂದೆ ನಿಂತು ಪೌಲನು ಹೀಗೆಂದನು: “ಅಥೇನೆಯ ಜನರೇ! ನೀವು ಪ್ರತಿಯೊಂದರಲ್ಲಿಯೂ ಹೇಗೆ ಬಹು ಧಾರ್ಮಿಕರಾಗಿದ್ದೀರಿ ಎಂಬುದನ್ನು ನಾನು ಕಂಡುಕೊಂಡಿದ್ದೇನೆ.</verse>
				<verse number="23">ನಾನು ಸುತ್ತಮುತ್ತಲೂ ತಿರುಗಾಡುತ್ತಾ, ನಿಮ್ಮ ಆರಾಧನಾ ವಿಗ್ರಹಗಳನ್ನು ಲಕ್ಷ್ಯವಿಟ್ಟು ಗಮನಿಸಿದಾಗ, ‘ತಿಳಿಯದ ದೇವರಿಗೆ’ ಎಂಬ ಬರಹವಿದ್ದ ಬಲಿಪೀಠವನ್ನು ನೋಡಿದೆನು. ಆದ್ದರಿಂದ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿರುವಿರೋ ಅದನ್ನೇ ನಾನು ನಿಮಗೆ ಪ್ರಕಟಿಸುತ್ತೇನೆ.</verse>
				<verse number="24">“ಜಗತ್ತನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ದೇವರು ಇಹಪರಲೋಕಗಳ ಅಧಿಪತಿಯಾಗಿದ್ದಾರೆ. ಅವರು ಕೈಗಳಿಂದ ಕಟ್ಟಿದ ದೇವಾಲಯಗಳಲ್ಲಿ ವಾಸಿಸುವವರಲ್ಲ.</verse>
				<verse number="25">ದೇವರಿಗೆ ಏನಾದರೂ ಅವಶ್ಯಕತೆಯಿರುವಂತೆ ಮಾನವ ಹಸ್ತಗಳ ಸೇವೆಯು ಅಗತ್ಯವಿರುವುದಿಲ್ಲ. ದೇವರೇ ಎಲ್ಲರಿಗೂ ಜೀವವನ್ನೂ ಉಸಿರನ್ನೂ ಪ್ರತಿಯೊಂದನ್ನೂ ದಯಪಾಲಿಸಿರುವುದರಿಂದ,</verse>
				<verse number="26">ದೇವರು ಒಬ್ಬ ಮನುಷ್ಯನಿಂದ ಎಲ್ಲಾ ದೇಶಗಳನ್ನು ಸೃಷ್ಟಿಸಿ, ಜನರು ಇಡೀ ಭೂಲೋಕವನ್ನು ತುಂಬಿಕೊಳ್ಳುವಂತೆ ಮಾಡಿದರು; ಅವರವರು ಇರತಕ್ಕ ಕಾಲಾವಧಿಯನ್ನೂ ವಾಸಿಸಲು ನಿರ್ದಿಷ್ಟ ಸ್ಥಳಗಳನ್ನೂ ನೇಮಿಸಿದ್ದಾರೆ.</verse>
				<verse number="27">ದೇವರು ನಮ್ಮಲ್ಲಿ ಯಾರಿಂದಲೂ ದೂರವಾಗಿಲ್ಲವಾದರೂ ದೇವರನ್ನು ನಾವು ಅಪೇಕ್ಷಿಸುವಂತೆ ನಾವು ದೇವರನ್ನು ಹುಡುಕಿ ಕಂಡುಕೊಳ್ಳುವಂತೆ ಹೀಗೆ ಮಾಡಿದರು.</verse>
				<verse number="28">ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ದೇವರಲ್ಲಿಯೇ.’ ನಿಮ್ಮ ಕವಿಗಳಲ್ಲಿ ಕೆಲವರು ಹೇಳಿರುವಂತೆ, ‘ನಾವು ನಿಜಕ್ಕೂ ದೇವರ ಮಕ್ಕಳೇ ಆಗಿದ್ದೇವೆ.’</verse>
				<verse number="29">“ನಾವು ದೇವರ ಮಕ್ಕಳಾಗಿರುವುದರಿಂದ, ಮಾನವ ಕಲ್ಪನೆ, ಕುಶಲತೆಯಿಂದ ರೂಪಿಸಿದ ಬೆಳ್ಳಿ, ಬಂಗಾರ, ಶಿಲೆಯ ಮೂರ್ತಿಯಂತೆ ದೇವರು ಇದ್ದಾರೆಂದು ನಾವು ಭಾವಿಸಬಾರದು.</verse>
				<verse number="30">ಇಂಥಾ ಅಜ್ಞಾನ ಕಾಲವನ್ನು ಹಿಂದಿನ ಕಾಲದಲ್ಲಿ ದೇವರು ತಮ್ಮ ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲಾ ಕಡೆಗಳಲ್ಲಿರುವ ಸರ್ವಮಾನವರೂ ಪಶ್ಚಾತ್ತಾಪ ಪಡಬೇಕೆಂದು ದೇವರು ಆಜ್ಞಾಪಿಸುತ್ತಾರೆ.</verse>
				<verse number="31">ಏಕೆಂದರೆ ದೇವರು ನೇಮಿಸಿದ ಒಬ್ಬರ ಮುಖಾಂತರ ಇಡೀ ಜಗತ್ತಿಗೆ ನೀತಿಗನುಸಾರವಾಗಿ ನ್ಯಾಯತೀರ್ಪು ಮಾಡುವ ಒಂದು ದಿನವನ್ನು ನೇಮಕ ಮಾಡಿದ್ದಾರೆ. ಇದನ್ನು ಎಲ್ಲರಿಗೂ ಖಚಿತ ಪಡಿಸಲೆಂದೇ ಆ ಒಬ್ಬರನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.”</verse>
				<verse number="32">ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ, ಅವರಲ್ಲಿ ಕೆಲವರು ಪರಿಹಾಸ್ಯ ಮಾಡಿದರು. ಇತರರು, “ನಾವು ಇನ್ನೊಮ್ಮೆ ಈ ವಿಷಯದ ಮೇಲೆ ನೀನು ಮಾತನಾಡುವುದನ್ನು ಕೇಳುತ್ತೇವೆ,” ಎಂದರು.</verse>
				<verse number="33">ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು.</verse>
				<verse number="34">ಆದರೆ ಕೆಲವರು ಪೌಲನನ್ನು ಅಂಟಿಕೊಂಡು ದೇವರಲ್ಲಿ ವಿಶ್ವಾಸವನ್ನಿಟ್ಟರು. ಅವರಲ್ಲಿ ಅರಿಯೊಪಾಗದ ದಿಯೊನುಸ್ಯನು ಮತ್ತು ದಾಮರಿ ಎಂಬ ಹೆಸರಿನ ಒಬ್ಬ ಮಹಿಳೆ ಹಾಗೂ ಇನ್ನಿತರರೂ ಇದ್ದರು.</verse>
			</chapter>
			<chapter number="18">
				<verse number="1">ಇದಾದನಂತರ, ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥ ಪಟ್ಟಣಕ್ಕೆ ಹೋದನು.</verse>
				<verse number="2">ಅಲ್ಲಿ ಅಕ್ವಿಲ ಎಂಬ ಯೆಹೂದ್ಯನನ್ನು ಕಂಡನು. ಅವನು ಪೊಂತ ಎಂಬ ಊರಿನ ನಿವಾಸಿ. ಎಲ್ಲಾ ಯೆಹೂದ್ಯರು ರೋಮ್ ಪಟ್ಟಣ ಬಿಟ್ಟು ಹೊರಟುಹೋಗಬೇಕೆಂದು ಚಕ್ರವರ್ತಿ ಕ್ಲೌದ್ಯನು ಆಜ್ಞೆ ಹೊರಡಿಸಿದ್ದರಿಂದ, ಅವನು ತನ್ನ ಹೆಂಡತಿ ಪ್ರಿಸ್ಕಿಲ್ಲಳೊಂದಿಗೆ ಇತ್ತೀಚೆಗೆ ಇಟಲಿಯನ್ನು ಬಿಟ್ಟು ಬಂದಿದ್ದನು. ಪೌಲನು ಅವರನ್ನು ನೋಡಲು ಹೋದನು.</verse>
				<verse number="3">ಅವರು ತನ್ನಂತೆಯೇ ಗುಡಾರಮಾಡುವ ಕೆಲಸದವರಾದ್ದರಿಂದ ಪೌಲನು ಅವರೊಂದಿಗಿದ್ದು ಅವರೊಂದಿಗೆ ಗುಡಾರ ಕೆಲಸ ಮಾಡುತ್ತಿದ್ದನು.</verse>
				<verse number="4">ಪ್ರತಿ ಸಬ್ಬತ್ ದಿನ ಸಭಾಮಂದಿರಕ್ಕೆ ಹೋಗಿ ಯೆಹೂದ್ಯರನ್ನೂ ಗ್ರೀಕರನ್ನೂ ವಿಶ್ವಾಸಿಗಳನ್ನಾಗಿಸಲು ಪ್ರೇರೇಪಿಸುತ್ತಿದ್ದನು.</verse>
				<verse number="5">ಮಕೆದೋನ್ಯದಿಂದ ಸೀಲ ಮತ್ತು ತಿಮೊಥೆ ಬಂದ ತರುವಾಯ, ಪೌಲನು ವಾಕ್ಯವನ್ನು ಬೋಧಿಸುವುದರಲ್ಲಿಯೇ ಸಮರ್ಪಿಸಿಕೊಂಡವನಾಗಿ ಯೇಸುವೇ ಕ್ರಿಸ್ತ ಎಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಕೊಟ್ಟನು.</verse>
				<verse number="6">ಆದರೆ ಯೆಹೂದ್ಯರು ಪೌಲನನ್ನು ವಿರೋಧಿಸಿ ದೂಷಿಸಿದಾಗ, ಅವನು ಅವರನ್ನು ಪ್ರತಿಭಟಿಸುವಂತೆ ತನ್ನ ಬಟ್ಟೆಗಳನ್ನು ಝಾಡಿಸಿ, “ನಿಮ್ಮ ರಕ್ತವು ನಿಮ್ಮ ತಲೆಯ ಮೇಲೆ ಇರಲಿ. ನಿಮ್ಮ ವಿನಾಶಕ್ಕೆ ನೀವೇ ಹೊಣೆ. ಅದಕ್ಕೆ ನಾನು ಜವಾಬ್ದಾರನಲ್ಲ, ಇಂದಿನಿಂದ ನಾನು ಶುದ್ಧಮನಸ್ಸುಳ್ಳವನಾಗಿ ಯೆಹೂದ್ಯರಲ್ಲದವರ ಬಳಿಗೆ ಹೋಗುತ್ತೇನೆ,” ಎಂದನು.</verse>
				<verse number="7">ಆಮೇಲೆ ಪೌಲನು ಸಭಾಮಂದಿರವನ್ನು ಬಿಟ್ಟು ಹೊರಗೆ ಬಂದು ಪಕ್ಕದಲ್ಲಿಯೇ ಇದ್ದ ದೇವಭಕ್ತನಾದ ತೀತಯುಸ್ತ ಎಂಬುವನ ಮನೆಗೆ ಹೋದನು.</verse>
				<verse number="8">ಸಭಾಮಂದಿರದ ನಾಯಕ ಕ್ರಿಸ್ಪ ಎಂಬುವನು ತನ್ನ ಮನೆಯವರೆಲ್ಲರೊಂದಿಗೆ ಕರ್ತ ಯೇಸುವಿನಲ್ಲಿ ವಿಶ್ವಾಸವನ್ನಿಟ್ಟನು. ಪೌಲನ ಬೋಧನೆ ಕೇಳಿದ ಕೊರಿಂಥದವರಲ್ಲಿ ಇನ್ನೂ ಅನೇಕರು ವಿಶ್ವಾಸವನ್ನಿಟ್ಟು ದೀಕ್ಷಾಸ್ನಾನ ಪಡೆದುಕೊಂಡರು.</verse>
				<verse number="9">ಒಂದು ರಾತ್ರಿ ಕರ್ತ ಯೇಸು ದರ್ಶನದಲ್ಲಿ ಪೌಲನೊಂದಿಗೆ ಮಾತನಾಡಿ: “ಭಯಪಡಬೇಡ, ಮಾತನಾಡುತ್ತಲೇ ಇರು, ಸುಮ್ಮನಿರಬೇಡ.</verse>
				<verse number="10">ನಾನೇ ನಿನ್ನೊಂದಿಗಿದ್ದೇನೆ. ಯಾರೂ ನಿನ್ನ ಮೇಲೆ ಬಿದ್ದು ನಿನಗೆ ಕೇಡನ್ನುಂಟುಮಾಡುವುದಿಲ್ಲ. ಏಕೆಂದರೆ ನನಗಾಗಿ ಈ ಪಟ್ಟಣದಲ್ಲಿ ಅನೇಕ ಜನರಿದ್ದಾರೆ,” ಎಂದರು.</verse>
				<verse number="11">ಆದ್ದರಿಂದ ಪೌಲನು ಅಲ್ಲಿ ಒಂದೂವರೆ ವರ್ಷವಿದ್ದು ಅವರಿಗೆ ದೇವರ ವಾಕ್ಯವನ್ನು ಬೋಧಿಸಿದನು.</verse>
				<verse number="12">ಗಲ್ಲಿಯೋನ ಎಂಬುವನು ಅಖಾಯದ ರಾಜ್ಯಪಾಲನಾಗಿದ್ದನು. ಯೆಹೂದ್ಯರು ಒಟ್ಟುಗೂಡಿ ಪೌಲನನ್ನು ವಿರೋಧಿಸಿ, ಅವನನ್ನು ನ್ಯಾಯಸ್ಥಾನಕ್ಕೆ ಕರೆದುಕೊಂಡು ಬಂದು,</verse>
				<verse number="13">“ಮೋಶೆಯ ನಿಯಮಕ್ಕೆ ವಿರುದ್ಧವಾದ ರೀತಿಯಲ್ಲಿ ದೇವರನ್ನು ಆರಾಧಿಸಬೇಕೆಂದು ಈ ಮನುಷ್ಯನು ಜನರನ್ನು ಪ್ರೇರೇಪಿಸುತ್ತಿದ್ದಾನೆ,” ಎಂದು ದೂರು ಹೇಳಿದರು.</verse>
				<verse number="14">ಪೌಲನು ಮಾತನಾಡಬೇಕೆಂದಿದ್ದಾಗ, ಗಲ್ಲಿಯೋನನು ಯೆಹೂದ್ಯರಿಗೆ, “ಯೆಹೂದ್ಯರೇ, ಅಪರಾಧ ಇಲ್ಲವೆ ದುಷ್ಕಾರ್ಯದ ಬಗ್ಗೆ ನಿಮಗೇನಾದರು ಹೇಳುವುದು ಇದ್ದರೆ, ಅದನ್ನು ಸಹನೆಯಿಂದ ಕೇಳುವುದು ನನಗೆ ಯೋಗ್ಯವಾದದ್ದು.</verse>
				<verse number="15">ಆದರೆ ವಾಕ್ಯ, ಹೆಸರುಗಳ ಮತ್ತು ನಿಮ್ಮ ನಿಯಮದ ವಿಷಯವಾಗಿರುವ ಪ್ರಶ್ನೆಗಳಾಗಿದ್ದರೆ, ಈ ಸಂಗತಿಯನ್ನು ನೀವೇ ಬಗೆಹರಿಸಿಕೊಳ್ಳಿ, ಅಂಥ ವಿಷಯಗಳಿಗೆ ನಾನು ನ್ಯಾಯಾಧೀಶನಾಗಿರಲಾರೆ,” ಎಂದನು.</verse>
				<verse number="16">ಹೀಗೆ ಅವನು ಅವರನ್ನು ನ್ಯಾಯಸ್ಥಾನದಿಂದ ಹೊರಗೆ ಕಳುಹಿಸಿಬಿಟ್ಟನು.</verse>
				<verse number="17">ಆದರೆ ಅವರು ಸಭಾಮಂದಿರದ ಅಧಿಕಾರಿ ಸೋಸ್ಥೆನನನ್ನು ಹಿಡಿದು ನ್ಯಾಯಸ್ಥಾನದ ಎದುರಿನಲ್ಲಿಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷಿಸಲಿಲ್ಲ.</verse>
				<verse number="18">ಇನ್ನು ಕೆಲವು ದಿನ ಪೌಲನು ಅಲ್ಲಿಯೇ ಉಳಿದುಕೊಂಡನು. ಅನಂತರ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಕೆಂಖ್ರೆಯ ಎಂಬ ಸ್ಥಳದಲ್ಲಿ ತಲೆ ಕೂದಲನ್ನು ಕ್ಷೌರಮಾಡಿಸಿಕೊಂಡು ತಾನು ಹೊತ್ತ ಹರಕೆ ಪೂರೈಸಿದ ಮೇಲೆ ಸಿರಿಯಕ್ಕೆ ನೌಕೆ ಪ್ರಯಾಣಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನ ಜೊತೆಯಲ್ಲಿ ಹೊರಟರು.</verse>
				<verse number="19">ಎಫೆಸಕ್ಕೆ ತಲುಪಿದಾಗ, ಪೌಲನು ಅವರನ್ನು ಅಲ್ಲಿಯೇ ಬಿಟ್ಟು ಸಭಾಮಂದಿರಕ್ಕೆ ಹೋಗಿ ಯೆಹೂದ್ಯರೊಂದಿಗೆ ಚರ್ಚೆ ನಡೆಸಿದನು.</verse>
				<verse number="20">ಹೆಚ್ಚು ಸಮಯ ತಮ್ಮೊಂದಿಗಿರಬೇಕೆಂದು ಅವರು ಕೇಳಿದಾಗ, ಪೌಲನು ಅದಕ್ಕೆ ಸಮ್ಮತಿಸಲಿಲ್ಲ.</verse>
				<verse number="21">ಆದರೆ ಅವನು ಅಲ್ಲಿಂದ ಹೊರಟು ಹೋಗಲಿಕ್ಕಿದ್ದಾಗ, “ದೇವರ ಚಿತ್ತವಾದರೆ, ನಾನು ಹಿಂದಿರುಗಿ ಬರುವೆ,” ಎಂದನು. ಆಮೇಲೆ ಎಫೆಸದಿಂದ ನೌಕೆಯಲ್ಲಿ ಪ್ರಯಾಣಮಾಡಿದನು.</verse>
				<verse number="22">ಅನಂತರ ಅವನು ಕೈಸರೈಯವನ್ನು ಸೇರಿದಾಗ, ಅಲ್ಲಿದ್ದ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೊರಟುಹೋದನು.</verse>
				<verse number="23">ಅಲ್ಲಿ ಸ್ವಲ್ಪ ಸಮಯ ಕಳೆದನಂತರ ಅವನು ಅಲ್ಲಿಂದ ಹೊರಟು ಕ್ರಮವಾಗಿ ಗಲಾತ್ಯ ಮತ್ತು ಫ್ರುಗ್ಯ ಪ್ರದೇಶದಲ್ಲೆಲ್ಲಾ ಸಂಚರಿಸುತ್ತಾ ಶಿಷ್ಯರಲ್ಲಿ ವಿಶ್ವಾಸವನ್ನು ಬಲಪಡಿಸಿದನು.</verse>
				<verse number="24">ಅಲೆಕ್ಸಾಂದ್ರಿಯ ನಿವಾಸಿ ಅಪೊಲ್ಲೋಸ ಎಂಬ ಹೆಸರಿನ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದಿದ್ದನು. ಅವನು ವಾಕ್ಚಾತುರ್ಯವುಳ್ಳವನೂ ಪವಿತ್ರ ವೇದದಲ್ಲಿ ಪ್ರವೀಣನೂ ಆಗಿದ್ದನು.</verse>
				<verse number="25">ಇವನು ಕರ್ತ ಯೇಸುವಿನ ಮಾರ್ಗದ ಬಗ್ಗೆ ಉಪದೇಶ ಹೊಂದಿದ್ದನು. ಯೋಹಾನನ ದೀಕ್ಷಾಸ್ನಾನವನ್ನು ಮಾತ್ರವೇ ತಿಳಿದವನಾಗಿದ್ದನು. ಇವನು ಆತ್ಮದಲ್ಲಿ ಉತ್ಸಾಹಭರಿತನಾಗಿ ಯೇಸುವಿನ ವಿಷಯದಲ್ಲಿ ಧೈರ್ಯವಾಗಿ ಬೋಧಿಸುತ್ತಿದ್ದನು.</verse>
				<verse number="26">ಇವನು ಸಭಾಮಂದಿರದಲ್ಲಿ ಧೈರ್ಯದಿಂದ ಬೋಧಿಸಲು ಪ್ರಾರಂಭಿಸಿದನು. ಆಗ ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನು ಮಾತನಾಡುವುದನ್ನು ಕೇಳಿ, ಅವನನ್ನು ತಮ್ಮ ಮನೆಗೆ ಆಮಂತ್ರಿಸಿದರು. ಅವರು ದೇವರ ಮಾರ್ಗವನ್ನು ಇನ್ನೂ ಹೆಚ್ಚಾದ ರೀತಿಯಲ್ಲಿ ಅಪೊಲ್ಲೋಸನಿಗೆ ವಿವರಿಸಿ ಹೇಳಿದರು.</verse>
				<verse number="27">ಅಪೊಲ್ಲೋಸನು ಅಖಾಯಕ್ಕೆ ಹೋಗಲು ಬಯಸಿದಾಗ, ಸಹೋದರರು ಅವನನ್ನು ಪ್ರೋತ್ಸಾಹಿಸಿ, ಅವನನ್ನು ಸ್ವೀಕರಿಸುವಂತೆ ಅಲ್ಲಿಯ ಶಿಷ್ಯರಿಗೆ ಪತ್ರವನ್ನು ಬರೆದುಕೊಟ್ಟರು. ಅವನು ಅಲ್ಲಿಗೆ ತಲುಪಿದಾಗ ದೇವರ ಕೃಪೆಯಿಂದ ವಿಶ್ವಾಸವಿಟ್ಟವರಿಗೆ ಅವನು ಬಹಳ ಸಹಾಯಮಾಡಿದನು.</verse>
				<verse number="28">ಯೇಸುವೇ ಬರತಕ್ಕ ಕ್ರಿಸ್ತ ಆಗಿದ್ದಾರೆ ಎಂದು ಪವಿತ್ರ ವೇದಗಳಿಂದ ಸಿದ್ಧಾಂತಪಡಿಸಿ ತೋರಿಸುತ್ತಾ ಅಲ್ಲಿಯ ಯೆಹೂದ್ಯರೊಂದಿಗೆ ಬಹಿರಂಗವಾಗಿ ಚರ್ಚೆ ಮಾಡಿದನು.</verse>
			</chapter>
			<chapter number="19">
				<verse number="1">ಅಪೊಲ್ಲೋಸನು ಕೊರಿಂಥದಲ್ಲಿ ಇದ್ದಾಗಲೇ, ಕಾಲ್ನಡಿಗೆಯಾಗಿ ಪೌಲನು ಪ್ರಯಾಣಮಾಡಿ ಎಫೆಸ ಪಟ್ಟಣಕ್ಕೆ ಬಂದನು. ಅಲ್ಲಿ ಕೆಲವು ಶಿಷ್ಯರನ್ನು ಕಂಡು,</verse>
				<verse number="2">“ನೀವು ವಿಶ್ವಾಸವನ್ನಿಟ್ಟಾಗ ಪವಿತ್ರಾತ್ಮರನ್ನು ಪಡೆದುಕೊಂಡಿರೋ?” ಎಂದು ಪ್ರಶ್ನೆ ಮಾಡಿದನು. ಅದಕ್ಕೆ ಅವರು, “ಇಲ್ಲ, ಪವಿತ್ರಾತ್ಮ ಇದ್ದಾರೆಂಬುದನ್ನು ನಾವು ಕೇಳಿಯೇ ಇಲ್ಲ,” ಎಂದರು.</verse>
				<verse number="3">“ಹಾಗಾದರೆ ನೀವು ಯಾವ ದೀಕ್ಷಾಸ್ನಾನವನ್ನು ಪಡೆದುಕೊಂಡಿದ್ದೀರಿ?” ಎಂದು ಪೌಲನು ಕೇಳಿದಾಗ ಅವರು, “ಯೋಹಾನನ ದೀಕ್ಷಾಸ್ನಾನವನ್ನು,” ಎಂದರು.</verse>
				<verse number="4">ಅದಕ್ಕೆ ಪೌಲನು, “ಯೋಹಾನನ ದೀಕ್ಷಾಸ್ನಾನವು ಪಶ್ಚಾತ್ತಾಪದ ದೀಕ್ಷಾಸ್ನಾನವಾಗಿತ್ತು. ತನ್ನ ನಂತರ ಬರಲಿರುವ ಯೇಸುವಿನಲ್ಲಿ ವಿಶ್ವಾಸವನ್ನಿಡಬೇಕೆಂದು ಯೋಹಾನನು ಜನರಿಗೆ ಹೇಳಿದನು,” ಎಂದನು.</verse>
				<verse number="5">ಇದನ್ನು ಕೇಳಿದ ನಂತರ ಅವರು ಕರ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡರು.</verse>
				<verse number="6">ಪೌಲನು ಅವರ ಮೇಲೆ ತನ್ನ ಕೈಗಳನ್ನಿಡಲು, ಅವರ ಮೇಲೆ ಪವಿತ್ರಾತ್ಮ ಬಂದರು. ಆಗ ಅವರು ಅನ್ಯಭಾಷೆಗಳಲ್ಲಿ ಮಾತನಾಡಿದರು ಹಾಗೂ ಪ್ರವಾದಿಸಿದರು.</verse>
				<verse number="7">ಅವರು ಸುಮಾರು ಹನ್ನೆರಡು ಜನ ಪುರುಷರಿದ್ದರು.</verse>
				<verse number="8">ಪೌಲನು ಸಭಾಮಂದಿರದೊಳಗೆ ಪ್ರವೇಶಿಸಿದನು. ಅಲ್ಲಿ ಮೂರು ತಿಂಗಳುಗಳ ಕಾಲ, ಧೈರ್ಯವಾಗಿ ಬೋಧನೆ ಮಾಡಿದನು. ದೇವರ ರಾಜ್ಯದ ಬಗ್ಗೆ ಅವರೊಡನೆ ಮನವೊಲಿಸುವಂತೆ ಚರ್ಚಿಸಿದನು.</verse>
				<verse number="9">ಆದರೆ ಅವರಲ್ಲಿ ಕೆಲವರು ಕಠಿಣ ಹೃದಯದವರಾಗಿ; ಒಡಂಬಡದೆ ಈ ಮಾರ್ಗವನ್ನು ಬಹಿರಂಗವಾಗಿ ದೂಷಿಸಿದರು. ಆದ್ದರಿಂದ ಪೌಲನು ಅವರನ್ನು ಬಿಟ್ಟು, ಶಿಷ್ಯರನ್ನು ತನ್ನೊಂದಿಗೆ ಕರೆದುಕೊಂಡು ಹೋಗಿ, ಅನುದಿನವೂ ತುರನ್ನನ ತರ್ಕಶಾಲೆಯಲ್ಲಿ ಅವರೊಂದಿಗೆ ಚರ್ಚಿಸುತ್ತಾ ಬಂದನು.</verse>
				<verse number="10">ಇದು ಎರಡು ವರ್ಷಗಳ ಕಾಲ ಮುಂದುವರಿಯಿತು. ಇದರಿಂದ ಏಷ್ಯಾ ಪ್ರಾಂತದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ ಗ್ರೀಕರೂ ಕರ್ತ ಯೇಸುವಿನ ವಾಕ್ಯವನ್ನು ಕೇಳಿದರು.</verse>
				<verse number="11">ದೇವರು ಪೌಲನ ಮುಖಾಂತರ ಅಸಾಧಾರಣ ಅದ್ಭುತಗಳನ್ನು ಮಾಡುತ್ತಿದ್ದರು.</verse>
				<verse number="12">ಹೀಗೆ ಪೌಲನನ್ನು ಮುಟ್ಟಿದ ಕೈವಸ್ತ್ರಗಳನ್ನೂ ಉಡುಪುಗಳನ್ನೂ ತೆಗೆದುಕೊಂಡುಹೋಗಿ ರೋಗಿಗಳಿಗೆ ಮುಟ್ಟಿಸಿದಾಗ ಅವರು ರೋಗಗಳಿಂದ ವಾಸಿಯಾಗುತ್ತಿದ್ದರು ಹಾಗೂ ಅವರಲ್ಲಿಯ ದುರಾತ್ಮಗಳು ಬಿಟ್ಟು ಹೋಗುತ್ತಿದ್ದವು.</verse>
				<verse number="13">ಕೆಲವು ಯೆಹೂದ್ಯರು ದುರಾತ್ಮಗಳನ್ನು ಬಿಡಿಸಲು ಪ್ರಯತ್ನಿಸಿ, “ಪೌಲನು ಸಾರುತ್ತಿರುವ ಯೇಸುವಿನ ಹೆಸರಿನಲ್ಲಿ ನಾನು ನಿಮಗೆ ಆಜ್ಞಾಪಿಸುತ್ತೇನೆ,” ಎಂದು ಅವರು ಕರ್ತ ಯೇಸುವಿನ ಹೆಸರನ್ನು ಬಳಸಲು ಪ್ರಯತ್ನಿಸಿದರು.</verse>
				<verse number="14">ಯೆಹೂದ್ಯ ಮುಖ್ಯಯಾಜಕ ಸ್ಕೇವ ಎಂಬುವನ ಏಳು ಜನ ಗಂಡು ಮಕ್ಕಳು ಈ ರೀತಿ ಮಾಡುತ್ತಿದ್ದರು.</verse>
				<verse number="15">ದುರಾತ್ಮವು ಅವರಿಗೆ ಉತ್ತರವಾಗಿ, “ಯೇಸುವನ್ನು ನಾನು ಬಲ್ಲೆ, ಪೌಲನೂ ನನಗೆ ಗೊತ್ತು, ಆದರೆ ನೀವು ಯಾರು?” ಎಂದು ಕೇಳಿ,</verse>
				<verse number="16">ದುರಾತ್ಮ ಪೀಡಿತ ಮನುಷ್ಯನು ಅವರ ಮೇಲೆ ಹಾರಿಬಿದ್ದು, ಅವರೆಲ್ಲರಿಗಿಂತಲೂ ಹೆಚ್ಚು ಬಲಗೊಂಡು ಅವರನ್ನು ಬಡಿದು ಗಾಯಗೊಳಿಸಲು, ಅವರು ನಗ್ನರಾಗಿಯೇ ಮನೆಬಿಟ್ಟು ಹೊರಗೆ ಓಡಿಹೋದರು.</verse>
				<verse number="17">ಎಫೆಸದಲ್ಲಿ ವಾಸಿಸುತ್ತಿದ್ದ ಯೆಹೂದ್ಯರಿಗೂ ಗ್ರೀಕರಿಗೂ ಈ ವಿಷಯ ತಿಳಿದಾಗ, ಅವರೆಲ್ಲರೂ ಬಹಳ ಭಯಗೊಂಡರು. ಹೀಗೆ ಕರ್ತ ಯೇಸುವಿನ ಹೆಸರಿಗೆ ಅತ್ಯಂತ ಮಹಿಮೆಯಾಯಿತು.</verse>
				<verse number="18">ವಿಶ್ವಾಸವಿಟ್ಟವರಲ್ಲಿ ಅನೇಕರು ಅಲ್ಲಿಗೆ ಬಂದು ತಮ್ಮ ಕೃತ್ಯಗಳನ್ನು ಅರಿಕೆಮಾಡಿದರು.</verse>
				<verse number="19">ಮಾಟಮಂತ್ರ ಮಾಡುತ್ತಿದ್ದವರು ತಮ್ಮ ಗ್ರಂಥಗಳನ್ನು ತೆಗೆದುಕೊಂಡು ಬಂದು ಎಲ್ಲರ ಮುಂದೆ ಸುಟ್ಟು ಹಾಕಿದರು. ಅವುಗಳ ಒಟ್ಟು ಮೌಲ್ಯ ಐವತ್ತು ಸಾವಿರ ಬೆಳ್ಳಿನಾಣ್ಯಗಳಷ್ಟಾಯಿತು.</verse>
				<verse number="20">ಹೀಗೆ ಕರ್ತ ಯೇಸುವಿನ ವಾಕ್ಯವು ವಿಸ್ತಾರವಾಗಿ ಹರಡುತ್ತಾ ಪ್ರಬಲವಾಯಿತು.</verse>
				<verse number="21">ಇದೆಲ್ಲ ಸಂಭವಿಸಿದ ನಂತರ ಮಕೆದೋನ್ಯ ಮತ್ತು ಅಖಾಯ ಮಾರ್ಗವಾಗಿ ಯೆರೂಸಲೇಮಿಗೆ ಹೋಗಲು ಪೌಲನು ಮನಸ್ಸಿನಲ್ಲಿ ನಿರ್ಧರಿಸಿದನು. ಅವನು, “ಅಲ್ಲಿಗೆ ಹೋದ ನಂತರ ನಾನು ರೋಮ್ ಪಟ್ಟಣವನ್ನು ಸಂದರ್ಶಿಸಬೇಕು,” ಎಂದನು.</verse>
				<verse number="22">ತನ್ನ ಇಬ್ಬರು ಸಹಾಯಕರಾದ ತಿಮೊಥೆ ಮತ್ತು ಎರಸ್ತನನ್ನು ಮಕೆದೋನ್ಯಕ್ಕೆ ಕಳುಹಿಸಿ ತಾನು ಇನ್ನೂ ಸ್ವಲ್ಪಕಾಲ ಏಷ್ಯಾ ಪ್ರಾಂತದಲ್ಲಿ ಇದ್ದನು.</verse>
				<verse number="23">ಕ್ರಿಸ್ತ ಯೇಸುವಿನ ಮಾರ್ಗದ ವಿಷಯವಾಗಿ ಆ ಸಮಯದಲ್ಲಿ ದೊಡ್ಡ ಗಲಭೆ ಉಂಟಾಯಿತು.</verse>
				<verse number="24">ಏಕೆಂದರೆ ದೇಮೇತ್ರಿಯ ಎಂಬ ಒಬ್ಬ ಅಕ್ಕಸಾಲಿಗನು ಅರ್ತೆಮೀ ದೇವಿಯ ಬೆಳ್ಳಿಯ ಮೂರ್ತಿಗಳನ್ನು ಮಾಡುವವನಾಗಿದ್ದು, ಆ ಶಿಲ್ಪಿಗಳ ಹಣ ಸಂಪಾದನೆಗೆ ಬಹಳ ವ್ಯಾಪಾರವನ್ನು ಒದಗಿಸುತ್ತಿದ್ದನು.</verse>
				<verse number="25">ಅವನು ಶಿಲ್ಪಿಗಳನ್ನೂ ಆ ಕಸುಬಿಗೆ ಸಂಬಂಧಪಟ್ಟ ವ್ಯಾಪಾರಿಗಳನ್ನೂ ಒಟ್ಟಿಗೆ ಕೂಡಿಸಿ ಅವರಿಗೆ, “ಜನರೇ, ಈ ವೃತ್ತಿಯಿಂದ ನಮಗೆ ಉತ್ತಮ ಆದಾಯ ಬರುತ್ತಿದೆಯೆಂಬುದನ್ನು ನೀವು ತಿಳಿದಿರುವಿರಿ.</verse>
				<verse number="26">ಪೌಲನೆಂಬ ಈ ಮನುಷ್ಯನು ಎಫೆಸದಲ್ಲಿಯೂ ಇಡೀ ಏಷ್ಯಾ ಪ್ರಾಂತದಲ್ಲಿಯೂ ದೊಡ್ಡ ಸಂಖ್ಯೆಯಲ್ಲಿ ಜನರನ್ನು ಮನವೊಲಿಸಿ, ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲ ಎಂದು ಹೇಳಿ, ಅವರನ್ನು ಮಾರ್ಪಡಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ಕೇಳಿದ್ದೀರಿ ಹಾಗೂ ಕಂಡಿದ್ದೀರಿ.</verse>
				<verse number="27">ಇದರಿಂದ ಈಗ ನಮ್ಮ ವೃತ್ತಿಗೆ ಅಪಾಯ ಬಂದಿರುವುದಲ್ಲದೆ ಅರ್ತೆಮೀ ಮಹಾದೇವಿಯ ಗುಡಿಯ ಬಗ್ಗೆಯೂ ಯೋಚಿಸಬೇಕು. ಏಕೆಂದರೆ ಏಷ್ಯಾದಲ್ಲಿಯೂ ಇಡೀ ಜಗತ್ತಿನಲ್ಲೆಲ್ಲಾ ಪೂಜಿಸುತ್ತಿರುವ ದೇವಿಯ ಮಹತ್ವವು ಸಹ ಕುಂದಿಹೋಗುವಂತಿದೆ,” ಎಂದನು.</verse>
				<verse number="28">ಈ ಮಾತುಗಳನ್ನು ಕೇಳಿ ಅವರು ಉಗ್ರರಾಗಿ, “ಎಫೆಸದ ಅರ್ತೆಮೀ ದೇವಿಯೇ ಮಹಾದೇವಿ!” ಎಂದು ಆರ್ಭಟಿಸಿದರು.</verse>
				<verse number="29">ಕೂಡಲೇ ಇಡೀ ಪಟ್ಟಣದಲ್ಲೆಲ್ಲಾ ಕೋಲಾಹಲ ಉಂಟಾಯಿತು. ಜನರು ಗುಂಪಾಗಿ ಕೂಡಿಕೊಂಡು ಬಂದು ಮಕೆದೋನ್ಯದಿಂದ ಪೌಲನೊಂದಿಗೆ ಪ್ರಯಾಣಮಾಡಿ ಬಂದ, ಗಾಯ ಮತ್ತು ಅರಿಸ್ತಾರ್ಕರನ್ನು ಬಂಧಿಸಿ ಕ್ರೀಡಾಂಗಣದೊಳಗೆ ಎಳೆದುಕೊಂಡು ಬಂದರು.</verse>
				<verse number="30">ಪೌಲನು ಜನರೆದುರಿಗೆ ಬರಬೇಕೆಂದಿದ್ದಾಗ ಶಿಷ್ಯರು ಅವನನ್ನು ಬಿಡಲಿಲ್ಲ.</verse>
				<verse number="31">ಪೌಲನ ಸ್ನೇಹಿತರಾಗಿದ್ದ ಏಷ್ಯಾ ಸೀಮೆಯ ಕೆಲವು ಅಧಿಕಾರಿಗಳೂ ಈ ಕ್ರೀಡಾಂಗಣದೊಳಗೆ ಹೋಗುವ ಸಾಹಸ ಮಾಡಬಾರದೆಂದು ವಿನಂತಿಸಿ ಅವನಿಗೆ ಸಂದೇಶ ಕಳುಹಿಸಿದರು.</verse>
				<verse number="32">ಜನಸಮೂಹ ಗಲಿಬಿಲಿಗೊಂಡಿತ್ತು. ಕೆಲವರು ಒಂದು ರೀತಿಯಾಗಿಯೂ ಇನ್ನು ಕೆಲವರು ಬೇರೊಂದು ವಿಧವಾಗಿಯೂ ಕೂಗುತ್ತಿದ್ದರು. ಬಹು ಪಾಲು ಜನರಿಗೆ ತಾವೇಕೆ ಅಲ್ಲಿಗೆ ಬಂದಿದ್ದೇವೆಂಬುದರ ಬಗ್ಗೆ ತಿಳಿದಿರಲೇ ಇಲ್ಲ.</verse>
				<verse number="33">ಆದರೆ ಯೆಹೂದ್ಯರು ಅಲೆಕ್ಸಾಂದ್ರ ಎಂಬುವನನ್ನು ಮುಂದಕ್ಕೆ ತಳ್ಳಿದರು. ಜನಸಮೂಹದಲ್ಲಿದ್ದ ಕೆಲವರು ಅವನಿಗೆ ವಿಷಯ ತಿಳಿಸಿದರು. ಆಗ ಅಲೆಕ್ಸಾಂದ್ರನು, ಜನರ ಎದುರಿನಲ್ಲಿ ವಾದಿಸಲಿಕ್ಕಾಗುವಂತೆ ಕೈಸನ್ನೆ ಮಾಡಿದನು.</verse>
				<verse number="34">ಆದರೆ ಅವನು ಯೆಹೂದ್ಯನೆಂದು ಜನರು ತಿಳಿದಾಗ, “ಎಫೆಸದ ಅರ್ತೆಮೀ ದೇವಿ ಮಹಾದೇವಿ!” ಎಂದು ಒಕ್ಕೊರಲಿನಿಂದ ಎರಡು ತಾಸುಗಳವರೆಗೆ ಆರ್ಭಟಿಸುತ್ತಲೇ ಇದ್ದರು.</verse>
				<verse number="35">ನಗರದ ಗುಮಾಸ್ತ ಜನಸಮೂಹವನ್ನು ಸುಮ್ಮನಿರಿಸಿ, “ಎಫೆಸದ ಜನರೇ, ಮಹಾ ಅರ್ತೆಮೀ ದೇವಿಯ ಮಂದಿರ ಹಾಗೂ ಆಕಾಶದಿಂದ ಬಿದ್ದ ಆಕೆಯ ಮೂರ್ತಿಯನ್ನು ಎಫೆಸ ಪಟ್ಟಣವು ಕಾಪಾಡುತ್ತಿದೆ ಎಂಬುದನ್ನು ತಿಳಿಯದಿರುವ ಮನುಷ್ಯನು ಇದ್ದಾನೆಯೇ?</verse>
				<verse number="36">ಈ ಸಂಗತಿಯನ್ನು ಅಲ್ಲಗಳೆಯುವಂತಿಲ್ಲ. ಆದ್ದರಿಂದ ನೀವು ಸುಮ್ಮನಿರಬೇಕು. ಅವಸರದಿಂದ ಏನನ್ನೂ ಮಾಡಲು ಹೋಗಬಾರದು.</verse>
				<verse number="37">ನೀವು ತಂದಿರುವ ಈ ಜನರು ನಮ್ಮ ಗುಡಿ ಕಳ್ಳರಲ್ಲ; ನಮ್ಮ ದೇವತೆಯ ದೂಷಕರೂ ಅಲ್ಲ.</verse>
				<verse number="38">ಹೀಗಿರುವುದರಿಂದ ದೇಮೇತ್ರಿಯನಿಗೂ ಅವನ ಸಹ ಶಿಲ್ಪಿಗಳಿಗೂ ಯಾವುದೇ ವ್ಯಕ್ತಿಯ ವಿರುದ್ಧ ಏನಾದರೂ ಆಪಾದನೆಗಳಿದ್ದರೆ ಅವರಿಗಾಗಿ ನ್ಯಾಯಾಲಯಗಳು ತೆರೆದಿವೆ. ರಾಜ್ಯಪಾಲರು ಇದ್ದಾರೆ; ಅವರ ಮುಂದೆ ದೂರುಗಳನ್ನು ಸಲ್ಲಿಸಲಿ.</verse>
				<verse number="39">ಆದರೆ ನೀವು ಇದಕ್ಕಿಂತ ಹೆಚ್ಚಾಗಿ ಬೇರೆ ಏನನ್ನಾದರೂ ತರುವುದಾದರೆ ಅದು ಕಾನೂನುಬದ್ಧ ಸಭೆಯಲ್ಲಿ ತೀರ್ಮಾನವಾಗಬೇಕು.</verse>
				<verse number="40">ಈಗ ಇದ್ದ ಪರಿಸ್ಥಿತಿಯಲ್ಲಿ ಇಂದಿನ ಘಟನೆಯಿಂದ ನಾವು ದಂಗೆಯೆದ್ದಿದ್ದೇವೆ ಎಂಬ ಅಪರಾಧ ನಮ್ಮ ಮೇಲೆ ಬರುವ ಆಸ್ಪದವಿದೆ. ಈ ಗಲಭೆಗೆ ಕಾರಣವೇನೆಂದು ವಿವರಿಸಲು ನಮಗೆ ಸಾಧ್ಯವಾಗುವುದಿಲ್ಲ. ಏಕೆಂದರೆ ಇದು ಕಾರಣವಿಲ್ಲದೇ ಎದ್ದ ದಂಗೆ,” ಎಂದನು.</verse>
				<verse number="41">ಇದನ್ನು ಹೇಳಿ ಅವನು ಜನಸಮೂಹವನ್ನು ಚದರಿಸಿಬಿಟ್ಟನು.</verse>
			</chapter>
			<chapter number="20">
				<verse number="1">ಗಲಭೆಯು ಶಾಂತಗೊಂಡ ನಂತರ ಪೌಲನು ಶಿಷ್ಯರನ್ನು ಕರೆಕಳುಹಿಸಿ ಅವರಿಗೆ ಧೈರ್ಯ ಹೇಳಿ, ಅವರನ್ನು ಬೀಳ್ಕೊಟ್ಟು ಮಕೆದೋನ್ಯಕ್ಕೆ ಪ್ರಯಾಣಮಾಡಿದನು.</verse>
				<verse number="2">ಆ ಪ್ರದೇಶದಲ್ಲೆಲ್ಲಾ ಜನರಿಗೆ ಅನೇಕ ಪ್ರೋತ್ಸಾಹದ ಮಾತುಗಳನ್ನು ಹೇಳುತ್ತಾ ಪ್ರಯಾಣಮಾಡಿ ಗ್ರೀಸ್ ತಲುಪಿದನು.</verse>
				<verse number="3">ಇಲ್ಲಿ ಮೂರು ತಿಂಗಳುಗಳ ಕಾಲ ಇದ್ದ ಮೇಲೆ, ಅವನು ಸಿರಿಯಕ್ಕೆ ಪ್ರಯಾಣ ಮಾಡಬೇಕೆಂದು ಯೋಚಿಸುತ್ತಿದ್ದಾಗ ಅವನಿಗೆ ವಿರೋಧವಾಗಿ ಯೆಹೂದ್ಯರು ಒಳಸಂಚು ಮಾಡಿದ್ದು ಅವನಿಗೆ ತಿಳಿದು ಬಂದದ್ದರಿಂದ ಮಕೆದೋನ್ಯ ಮಾರ್ಗವಾಗಿ ಹಿಂತಿರುಗಿ ಹೋಗಲು ನಿರ್ಣಯಿಸಿದನು.</verse>
				<verse number="4">ಬೆರೋಯದ ಪುರ್ರನ ಮಗ ಸೋಪತ್ರನು, ಥೆಸಲೋನಿಕದ ಅರಿಸ್ತಾರ್ಕ ಮತ್ತು ಸೆಕುಂದ, ದೆರ್ಬೆಯ ಗಾಯ, ತಿಮೊಥೆ ಅಲ್ಲದೆ ಏಷ್ಯಾ ಪ್ರಾಂತದ ತುಖಿಕ ಹಾಗೂ ತ್ರೊಫಿಮ ಅವನೊಂದಿಗೆ ಹೋದರು.</verse>
				<verse number="5">ಇವರೆಲ್ಲರೂ ಮುಂಚಿತವಾಗಿ ಹೋಗಿ ತ್ರೋವದಲ್ಲಿ ನಮಗಾಗಿ ಕಾದಿದ್ದರು.</verse>
				<verse number="6">ಹುಳಿಯಿಲ್ಲದ ರೊಟ್ಟಿಯ ಹಬ್ಬದ ನಂತರ ನಾವು ಫಿಲಿಪ್ಪಿಯಿಂದ ಸಮುದ್ರ ಮಾರ್ಗವಾಗಿ ಪ್ರಯಾಣಮಾಡಿ, ಐದು ದಿನಗಳ ತರುವಾಯ ತ್ರೋವದಲ್ಲಿದ್ದ ಇತರರೊಂದಿಗೆ ಸೇರಿ, ಅಲ್ಲಿ ಏಳು ದಿನ ಇದ್ದೆವು.</verse>
				<verse number="7">ವಾರದ ಮೊದಲನೆಯ ದಿನ ನಾವು ರೊಟ್ಟಿ ಮುರಿಯಲು ಒಂದಾಗಿ ಕೂಡಿಬಂದೆವು. ಪೌಲನು ಅಲ್ಲಿ ಬೋಧನೆ ಮಾಡಿದನು. ಮರುದಿನ ಅವನು ಹೊರಡಬೇಕಾದ್ದರಿಂದ ಮಧ್ಯರಾತ್ರಿಯವರೆಗೆ ಮಾತನಾಡುತ್ತಲೇ ಇದ್ದನು.</verse>
				<verse number="8">ನಾವು ಸಭೆ ಸೇರಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳು ಉರಿಯುತ್ತಿದ್ದವು.</verse>
				<verse number="9">ಒಂದು ಕಿಟಿಕಿಯಲ್ಲಿ ಯೂತಿಖ ಎಂಬ ಹೆಸರಿನ ಒಬ್ಬ ಯುವಕನು ಕುಳಿತುಕೊಂಡಿದ್ದನು. ಪೌಲನು ಬಹಳ ಹೊತ್ತು ಬೋಧಿಸುತ್ತಲೇ ಇದ್ದುದರಿಂದ ಅವನಿಗೆ ಗಾಢನಿದ್ರೆ ಹತ್ತಿತು. ನಿದ್ರಿಸುತ್ತಿದ್ದ ಅವನು ಮೂರನೇ ಅಂತಸ್ತಿನಿಂದ ಕೆಳಕ್ಕೆ ಬಿದ್ದನು. ಅವನನ್ನು ಎತ್ತಿಕೊಂಡಾಗ ಅವನು ಸತ್ತೇ ಹೋಗಿದ್ದನು.</verse>
				<verse number="10">ಆದರೆ ಪೌಲನು ಕೆಳಗೆ ಹೋಗಿ, ಆ ಯುವಕನನ್ನು ತಬ್ಬಿಕೊಂಡು, “ಗಾಬರಿಗೊಳ್ಳಬೇಡಿ, ಅವನ ಜೀವ ಅವನಲ್ಲಿದೆ,” ಎಂದನು.</verse>
				<verse number="11">ಅನಂತರ ಪೌಲನು ಮೇಲಂತಸ್ತಿಗೆ ಹೋಗಿ ವಿಶ್ವಾಸಿಗಳೊಂದಿಗೆ ರೊಟ್ಟಿ ಮುರಿದು ಊಟಮಾಡಿ, ಬೆಳಗಾಗುವವರೆಗೆ ಅವರೊಡನೆ ಮಾತನಾಡಿ, ಅಲ್ಲಿಂದ ಹೊರಟನು.</verse>
				<verse number="12">ಜೀವ ಹೊಂದಿದ ಆ ಯುವಕನನ್ನು ಜನರು ಮನೆಗೆ ಕರೆದುಕೊಂಡು ಹೋದರು. ಅವರಿಗೆ ಅಪಾರ ಸಾಂತ್ವನ ದೊರೆಯಿತು.</verse>
				<verse number="13">ಮೊದಲು ನಾವು ನೌಕೆ ಇದ್ದ ಸ್ಥಳಕ್ಕೆ ಹೋಗಿ ಅಸ್ಸೊಸಿ ಎಂಬಲ್ಲಿಗೆ ಸಮುದ್ರ ಪ್ರಯಾಣಮಾಡಿದೆವು. ಅಲ್ಲಿ ಪೌಲನು ಬಂದು ನಮ್ಮೊಂದಿಗೆ ನೌಕೆಯಲ್ಲಿ ಪ್ರಯಾಣ ಮಾಡಬೇಕಿತ್ತು. ಅಲ್ಲಿಗೆ ಕಾಲ್ನಡಿಗೆಯಾಗಿ ಹೋಗಬೇಕಾದ್ದರಿಂದ ಅವನು ಈ ಏರ್ಪಾಡು ಮಾಡಿದನು.</verse>
				<verse number="14">ಅಸ್ಸೊಸಿನಲ್ಲಿ ಪೌಲನು ನಮ್ಮನ್ನು ಭೇಟಿಯಾದಾಗ, ಅವನನ್ನು ಕರೆದುಕೊಂಡು ಮಿತಿಲೇನೆಗೆ ಹೋದೆವು.</verse>
				<verse number="15">ನಾವು ಮರುದಿನ ಅಲ್ಲಿಂದ ಪ್ರಯಾಣ ಮುಂದುವರೆಸಿ ಖೀಯೊಸ್ ದ್ವೀಪವನ್ನು ಸಮೀಪಿಸಿದೆವು. ಮರುದಿನ ಸಾಮೊಸನ್ನು ತಲುಪಿದೆವು. ಅನಂತರ ಮಾರನೆಯ ದಿನ ಮಿಲೇತನ್ನು ಸೇರಿದೆವು.</verse>
				<verse number="16">ಸಾಧ್ಯವಾದರೆ, ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬಕ್ಕೆ ಯೆರೂಸಲೇಮನ್ನು ತಲುಪಬೇಕೆಂಬ ಅವಸರ ಪೌಲನಿಗಿದ್ದುದ್ದರಿಂದ, ಏಷ್ಯಾ ಪ್ರಾಂತದಲ್ಲಿ ಕಾಲ ಕಳೆಯುವುದನ್ನು ತಪ್ಪಿಸಿ ಎಫೆಸವನ್ನು ದಾಟಿ ಹೋಗಬೇಕೆಂದು ನಿರ್ಧರಿಸಿದ್ದನು.</verse>
				<verse number="17">ಮಿಲೇತದಿಂದ, ಪೌಲನು ಎಫೆಸಕ್ಕೆ ಸಂದೇಶ ಕಳುಹಿಸಿ, ಅಲ್ಲಿಯ ಸಭೆಯ ಹಿರಿಯರು ಬರಬೇಕೆಂದು ತಿಳಿಸಿದನು.</verse>
				<verse number="18">ಅವರು ಬಂದ ಮೇಲೆ, ಪೌಲನು ಅವರಿಗೆ ಹೀಗೆಂದನು: “ನಾನು ಏಷ್ಯಾ ಪ್ರಾಂತಕ್ಕೆ ಬಂದ ಪ್ರಥಮ ದಿನದಿಂದ ನಿಮ್ಮೊಂದಿಗಿದ್ದು ಪೂರ್ತಿ ಸಮಯ ಹೇಗೆ ಕಳೆದನೆಂಬುದನ್ನು ನೀವು ಅರಿತಿದ್ದೀರಿ.</verse>
				<verse number="19">ಯೆಹೂದ್ಯರ ಒಳಸಂಚುಗಳಿಂದ ನಾನು ಕಠಿಣ ಪರೀಕ್ಷೆಗಳಿಗೆ ಒಳಗಾಗಿದ್ದರೂ ಬಹಳ ದೀನತೆಯಿಂದಲೂ ಕಣ್ಣೀರಿನಿಂದಲೂ ಕರ್ತ ಯೇಸುವಿನ ಸೇವೆ ಮಾಡಿದೆನು.</verse>
				<verse number="20">ನಿಮಗೆ ಹಿತಕರವಾದುದ್ದೆಲ್ಲವನ್ನೂ ಬೋಧಿಸಲು ನಾನು ಹಿಂಜರಿಯಲಿಲ್ಲ. ಬಹಿರಂಗದಲ್ಲಿಯೂ ಮನೆಮನೆಗಳಲ್ಲಿಯೂ ನಾನು ನಿಮಗೆ ಬೋಧಿಸಿದ್ದೇನೆ.</verse>
				<verse number="21">ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ನಮ್ಮ ಕರ್ತ ಯೇಸುವಿನಲ್ಲಿ ವಿಶ್ವಾಸವಿಡಬೇಕೆಂದು ಯೆಹೂದ್ಯರಿಗೂ ಗ್ರೀಕರಿಗೂ ಖಚಿತವಾಗಿ ಸಾಕ್ಷಿ ಹೇಳಿದ್ದೇನೆ.</verse>
				<verse number="22">“ಈಗಲಾದರೋ, ನಾನು ಪವಿತ್ರಾತ್ಮ ಪ್ರೇರಿತನಾಗಿ ಯೆರೂಸಲೇಮಿನಲ್ಲಿ ನನಗೇನಾಗುವುದೋ ಎಂಬುದನ್ನು ತಿಳಿಯದೆ, ಅಲ್ಲಿಗೆ ಹೋಗುತ್ತಿದ್ದೇನೆ.</verse>
				<verse number="23">ಪ್ರತಿಯೊಂದು ಪಟ್ಟಣದಲ್ಲಿ ಸೆರೆಮನೆಯೂ ಬಾಧೆಯೂ ನನಗಾಗಿ ಕಾದಿವೆಯೆಂದು ಪವಿತ್ರಾತ್ಮ ದೇವರು ಎಚ್ಚರಿಸಿದ್ದಾರೆ.</verse>
				<verse number="24">ಆದರೂ ನನ್ನ ಪ್ರಾಣ ನನಗೆ ಅಮೂಲ್ಯವೆಂದು ನಾನು ಎಣಿಸುವುದಿಲ್ಲ. ಕರ್ತ ಯೇಸು ನನಗೆ ಕೊಟ್ಟ, ದೇವರ ಕೃಪೆಯ ಸುವಾರ್ತೆಗೆ ಸಾಕ್ಷಿ ಕೊಡುವ ಸೇವೆಯ ಓಟವನ್ನು ಓಡಿ ಮುಗಿಸುವುದೇ ನನ್ನ ಬಾಳಿನ ಒಂದೇ ಗುರಿಯಾಗಿದೆ.</verse>
				<verse number="25">“ನಿಮ್ಮ ಮಧ್ಯದಲ್ಲಿ ನಾನು ದೇವರ ರಾಜ್ಯದ ಬಗ್ಗೆ ಬೋಧಿಸುತ್ತಾ ಇದ್ದೆನು. ನಿಮ್ಮಲ್ಲಿ ಯಾರೂ ನನ್ನ ಮುಖವನ್ನು ಇನ್ನೊಮ್ಮೆ ಕಾಣಲಾರಿರಿ ಎಂದು ನಾನು ಬಲ್ಲೆನು.</verse>
				<verse number="26">ಆದಕಾರಣ ನಾನು ಎಲ್ಲಾ ಮನುಷ್ಯರ ರಕ್ತದ ಹೊಣೆಯಿಂದ ವಿಮುಕ್ತನಾಗಿದ್ದೇನೆ ಎಂದು ಈ ದಿನ ಸಾಕ್ಷಿಕೊಡುತ್ತೇನೆ.</verse>
				<verse number="27">ಏಕೆಂದರೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ಬೋಧಿಸುವುದರಲ್ಲಿ ನಾನು ಹಿಂಜರಿಯಲಿಲ್ಲ.</verse>
				<verse number="28">ದೇವರು ತಮ್ಮ ರಕ್ತದಿಂದ ಕೊಂಡುಕೊಂಡ ಸಭೆಗೆ ನೀವು ಕುರುಬರಾಗಿರುವುದಕ್ಕಾಗಿ ಪವಿತ್ರಾತ್ಮರು ನಿಮ್ಮನ್ನೇ ಮಂದೆಯಲ್ಲಿ ಮೇಲ್ವಿಚಾರಕರನ್ನಾಗಿ ಇಟ್ಟಿರುವುದರಿಂದ, ನಿಮ್ಮ ವಿಷಯದಲ್ಲಿಯೂ ಇಡೀ ಮಂದೆಯ ವಿಷಯದಲ್ಲಿಯೂ ಎಚ್ಚರವಾಗಿರಿ.</verse>
				<verse number="29">ನಾನು ಹೋದ ನಂತರ ಕ್ರೂರ ತೋಳಗಳು ನಿಮ್ಮ ಮಧ್ಯದಲ್ಲಿ ಪ್ರವೇಶಿಸಿ ಮಂದೆಯನ್ನು ಹಾಳುಮಾಡದೆ ಬಿಡುವುದಿಲ್ಲ ಎಂದು ಬಲ್ಲೆನು.</verse>
				<verse number="30">ನಿಮ್ಮೊಳಗಿಂದಲೂ ಜನರು ಎದ್ದು ವಕ್ರಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳೆದುಕೊಳ್ಳುವರು.</verse>
				<verse number="31">ಆದ್ದರಿಂದ ನಾನು ಮೂರು ವರ್ಷಗಳ ಕಾಲ ಹಗಲುರಾತ್ರಿ ಕಣ್ಣೀರಿಡುತ್ತಾ ಎಡಬಿಡದೆ ನಿಮ್ಮನ್ನು ಎಚ್ಚರಿಸುತ್ತಾ ಇದ್ದೇನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡು ಎಚ್ಚರವಾಗಿರಿ.</verse>
				<verse number="32">“ಆದಕಾರಣ ನಾನು ದೇವರಿಗೂ ಅವರ ಕೃಪಾವಾಕ್ಯಕ್ಕೂ ಈಗ ನಿಮ್ಮನ್ನು ಒಪ್ಪಿಸಿಕೊಡುತ್ತೇನೆ. ಆ ವಾಕ್ಯವು ನಿಮ್ಮಲ್ಲಿ ಭಕ್ತಿವೃದ್ಧಿ ಮಾಡಿ, ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಕೊಡಲು ಸಾಮರ್ಥ್ಯವುಳ್ಳದ್ದು.</verse>
				<verse number="33">ನಾನು ಯಾರ ಬೆಳ್ಳಿ ಬಂಗಾರಕ್ಕಾಗಲಿ, ಬಟ್ಟೆಗಾಗಲಿ ಆಶೆಪಡಲಿಲ್ಲ.</verse>
				<verse number="34">ನನ್ನ ಹಸ್ತಗಳೇ ನನ್ನ ಅಗತ್ಯಗಳನ್ನೂ ನನ್ನೊಂದಿಗಿದ್ದವರ ಅಗತ್ಯಗಳನ್ನೂ ಪೂರೈಸಿದವೆಂಬುದನ್ನು ನೀವು ಬಲ್ಲವರಾಗಿದ್ದೀರಿ.</verse>
				<verse number="35">ಈ ರೀತಿಯ ಪರಿಶ್ರಮದ ದುಡಿಮೆಯಿಂದ ನಾವು ಬಲಹೀನರಿಗೆ ಸಹಾಯ ಮಾಡಬೇಕೆಂಬುದನ್ನು ನನ್ನ ಮಾದರಿಯಿಂದ ನಿಮಗೆ ತೋರಿಸಿಕೊಟ್ಟೆನು. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಆಶೀರ್ವಾದ,’ ಎಂದು ಕರ್ತ ಆಗಿರುವ ಯೇಸುವೇ ಹೇಳಿದ ಮಾತುಗಳನ್ನು ನಿಮಗೆ ಜ್ಞಾಪಕಪಡಿಸುತ್ತೇನೆ,” ಎಂದನು.</verse>
				<verse number="36">ಇದನ್ನು ಹೇಳಿದ ತರುವಾಯ ಅವನು ಎಲ್ಲರೊಂದಿಗೆ ಮೊಣಕಾಲೂರಿ ಪ್ರಾರ್ಥನೆಮಾಡಿದನು.</verse>
				<verse number="37">ಅವರೆಲ್ಲರೂ ಪೌಲನ ಕೊರಳನ್ನು ಅಪ್ಪಿಕೊಂಡು ಕಣ್ಣೀರಿಡುತ್ತಾ ಅವನಿಗೆ ಮುದ್ದಿಟ್ಟರು.</verse>
				<verse number="38">“ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ,” ಎಂದು ಅವನು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ದುಃಖಗೊಂಡು, ಅವನೊಂದಿಗೆ ನೌಕೆಯವರೆಗೆ ಹೋದರು.</verse>
			</chapter>
			<chapter number="21">
				<verse number="1">ನಾವು ಅವರನ್ನು ಅಗಲಿದ ನಂತರ, ಸಮುದ್ರ ಮಾರ್ಗವಾಗಿ ಪ್ರಯಾಣಮಾಡಿ ನೇರವಾಗಿ ಕೋಸ್ ದ್ವೀಪಕ್ಕೆ ಹೋದೆವು. ಮರುದಿನ ರೋದ ಎಂಬಲ್ಲಿಗೆ ಹೋಗಿ ಅಲ್ಲಿಂದ ಪತರಕ್ಕೆ ಬಂದೆವು.</verse>
				<verse number="2">ಅಲ್ಲಿ ಫೊಯಿನಿಕೆಗೆ ಹೋಗುವ ನೌಕೆಯನ್ನು ಕಂಡು, ಅದನ್ನೇರಿ ಪ್ರಯಾಣ ಮುಂದುವರಿಸಿದೆವು.</verse>
				<verse number="3">ಸೈಪ್ರಸ್ ಹತ್ತಿರ ಬಂದು ಅದರ ದಕ್ಷಿಣಕ್ಕೆ ಪ್ರಯಾಣಮಾಡಿ ಸಿರಿಯಕ್ಕೆ ಹೋದೆವು. ನಮ್ಮ ನೌಕೆಯಲ್ಲಿದ್ದ ಸರಕುಗಳನ್ನು ಇಳಿಸಬೇಕಾಗಿದ್ದ ಟೈರ್ ಎಂಬಲ್ಲಿ ಬಂದು ಇಳಿದೆವು.</verse>
				<verse number="4">ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಅವರೊಂದಿಗೆ ಏಳು ದಿನ ಇದ್ದೆವು. ಪೌಲನು ಯೆರೂಸಲೇಮಿಗೆ ಹೋಗಬಾರದೆಂದು ಅವರು ಪವಿತ್ರಾತ್ಮ ಪ್ರೇರಣೆಯಿಂದ ಹೇಳಿದರು.</verse>
				<verse number="5">ಆದರೆ ನಮ್ಮ ಸಮಯ ಮುಗಿದಾಗ, ನಮ್ಮ ಪ್ರಯಾಣವನ್ನು ಮುಂದುವರಿಸಬೇಕೆಂದಿದ್ದೆವು. ಶಿಷ್ಯರೆಲ್ಲರೂ ಅವರ ಮಡದಿ ಮಕ್ಕಳೂ ಪಟ್ಟಣದ ಹೊರಗಿನವರೆಗೆ ನಮ್ಮೊಂದಿಗೆ ಬಂದರು. ಸಮುದ್ರ ತೀರದಲ್ಲಿ ನಾವು ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.</verse>
				<verse number="6">ಪರಸ್ಪರ ಬೀಳ್ಕೊಡುಗೆಯಾದ ನಂತರ, ನಾವು ನೌಕೆಯನ್ನೇರಿದೆವು. ಅವರು ತಮ್ಮ ಮನೆಗೆ ಹೊರಟು ಹೋದರು.</verse>
				<verse number="7">ಟೈರ್ ಪಟ್ಟಣದಿಂದ ನಮ್ಮ ಪ್ರಯಾಣ ಮುಂದುವರಿಸಿ ಪ್ತೊಲೆಮಾಯ ಎಂಬಲ್ಲಿಗೆ ಬಂದಿಳಿದೆವು. ಅಲ್ಲಿಯ ಸಹೋದರರನ್ನು ವಂದಿಸಿ ಅವರೊಂದಿಗೆ ಒಂದು ದಿನ ಇದ್ದೆವು.</verse>
				<verse number="8">ಮರುದಿನ ಹೊರಟು ಕೈಸರೈಯ ಪಟ್ಟಣವನ್ನು ತಲುಪಿದೆವು. ಅಲ್ಲಿ ಏಳು ಜನರಲ್ಲಿ ಒಬ್ಬನಾದ, ಫಿಲಿಪ್ಪನೆಂಬ ಸುವಾರ್ತಿಕನ ಮನೆಯಲ್ಲಿ ತಂಗಿದೆವು.</verse>
				<verse number="9">ಅವನಿಗೆ ಅವಿವಾಹಿತರಾದ ನಾಲ್ಕು ಮಂದಿ ಹೆಣ್ಣು ಮಕ್ಕಳಿದ್ದರು. ಅವರು ಪ್ರವಾದಿಸುವವರಾಗಿದ್ದರು.</verse>
				<verse number="10">ನಾವು ಅಲ್ಲಿ ಕೆಲವು ದಿನ ಇದ್ದ ತರುವಾಯ, ಅಗಬ ಎಂಬ ಹೆಸರಿನ ಪ್ರವಾದಿ ಯೂದಾಯದಿಂದ ಬಂದನು.</verse>
				<verse number="11">ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ತನ್ನ ಕೈಕಾಲುಗಳಿಗೆ ಅದನ್ನು ಕಟ್ಟಿಕೊಂಡು, “ಪವಿತ್ರಾತ್ಮರು ಇಂತೆನ್ನುತ್ತಾರೆ, ‘ಈ ನಡುಪಟ್ಟಿ ಯಾರದೋ ಆ ಮನುಷ್ಯನನ್ನು ಯೆರೂಸಲೇಮಿನ ಯೆಹೂದ್ಯರು ಈ ರೀತಿಯಲ್ಲಿ ಬಂಧಿಸಿ, ಯೆಹೂದ್ಯರಲ್ಲದವರ ಕೈಗೆ ಒಪ್ಪಿಸುವರು,’ ” ಎಂದನು.</verse>
				<verse number="12">ಇದನ್ನು ನಾವು ಕೇಳಿದಾಗ, ನಾವೂ ಅಲ್ಲಿಯ ಜನರೂ ಯೆರೂಸಲೇಮಿಗೆ ಹೋಗಬಾರದೆಂದು ಪೌಲನನ್ನು ಬೇಡಿಕೊಂಡೆವು.</verse>
				<verse number="13">ಆಗ ಪೌಲನು, “ನೀವೇಕೆ ಅತ್ತು ನನ್ನ ಹೃದಯ ಒಡೆಯುತ್ತೀರಿ? ಬಂಧಿತನಾಗಲಷ್ಟೇ ಅಲ್ಲ, ನಮ್ಮ ಕರ್ತ ಯೇಸುವಿನ ಹೆಸರಿನ ನಿಮಿತ್ತ ಯೆರೂಸಲೇಮಿನಲ್ಲಿ ನಾನು ಸಾಯಲಿಕ್ಕೂ ಸಿದ್ಧನಾಗಿದ್ದೇನೆ,” ಎಂದನು.</verse>
				<verse number="14">ಪೌಲನು ಸಮ್ಮತಿಸದೆ ಇದ್ದ ಕಾರಣ, “ಕರ್ತ ಯೇಸುವಿನ ಚಿತ್ತ ನೆರವೇರಲಿ,” ಎಂದು ಹೇಳಿ ನಾವು ಸುಮ್ಮನಾದೆವು.</verse>
				<verse number="15">ಇದಾದನಂತರ ನಾವು ಸಿದ್ಧರಾಗಿ ಯೆರೂಸಲೇಮಿಗೆ ಹೋದೆವು.</verse>
				<verse number="16">ಕೈಸರೈಯದಿಂದ ಕೆಲವು ಶಿಷ್ಯರು ನಮ್ಮೊಂದಿಗೆ ಬಂದು, ಮ್ನಾಸೋನ ಎಂಬುವನ ಮನೆಗೆ ನಾವು ಇಳಿದುಕೊಳ್ಳುವಂತೆ ಕರೆದುಕೊಂಡು ಹೋದರು. ಅವನು ಸೈಪ್ರಸ್ ದಿಂದ ಬಂದ ಪ್ರಥಮ ಶಿಷ್ಯರಲ್ಲಿ ಒಬ್ಬನಾಗಿದ್ದನು.</verse>
				<verse number="17">ನಾವು ಯೆರೂಸಲೇಮನ್ನು ತಲುಪಿದಾಗ, ಸಹೋದರರು ನಮ್ಮನ್ನು ಸಂತೋಷದಿಂದ ಸ್ವೀಕರಿಸಿದರು.</verse>
				<verse number="18">ಮರುದಿನ ನಾವೆಲ್ಲರೂ ಪೌಲನೊಂದಿಗೆ ಯಾಕೋಬನನ್ನು ನೋಡಲು ಹೋದೆವು. ಅಲ್ಲಿ ಎಲ್ಲಾ ಸಭೆಹಿರಿಯರೂ ಇದ್ದರು.</verse>
				<verse number="19">ಪೌಲನು ಅವರನ್ನು ವಂದಿಸಿ, ತನ್ನ ಸೇವೆಯ ಮೂಲಕ ದೇವರು ಯೆಹೂದ್ಯರಲ್ಲದವರ ಮಧ್ಯದಲ್ಲಿ ಮಾಡಿದ ಕಾರ್ಯಗಳನ್ನು ವಿವರಿಸಿದನು.</verse>
				<verse number="20">ಅವರು ಅದನ್ನು ಕೇಳಿ, ದೇವರನ್ನು ಕೊಂಡಾಡಿದರು. ಅನಂತರ ಪೌಲನಿಗೆ, “ಸಹೋದರನೇ, ಸಾವಿರಾರು ಜನ ಯೆಹೂದ್ಯರು ನಂಬಿರುವುದನ್ನು ಕಾಣುತ್ತೀಯಲ್ಲಾ, ಅವರೆಲ್ಲರೂ ಮೋಶೆಯ ನಿಯಮದ ಅಭಿಮಾನಿಗಳಾಗಿದ್ದರು.</verse>
				<verse number="21">ನೀನು ಯೆಹೂದ್ಯರಲ್ಲದವರ ಮಧ್ಯದಲ್ಲಿ ವಾಸಿಸುತ್ತಿರುವ ಯೆಹೂದ್ಯರಿಗೆ, ‘ನೀವು ಮೋಶೆಯ ನಿಯಮವನ್ನು ಅನುಸರಿಸಬೇಡಿರಿ, ನಿಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಬೇಡಿರಿ,’ ಎಂದು ಬೋಧಿಸುವುದಾಗಿ ನಿನ್ನ ವಿಷಯದಲ್ಲಿ ಅವರಿಗೆ ತಿಳಿದು ಬಂದಿದೆ.</verse>
				<verse number="22">ಹೀಗಿರುವಲ್ಲಿ ನಾವೇನು ಮಾಡೋಣ? ನೀನು ಇಲ್ಲಿಗೆ ಬಂದಿರುವ ವಿಷಯವೂ ಅವರಿಗೆ ಗೊತ್ತಾಗುವುದು.</verse>
				<verse number="23">ಆದ್ದರಿಂದ ನಾವು ನಿನಗೆ ಹೇಳುವಂತೆ ಮಾಡು, ಹರಕೆ ಹೊತ್ತ ನಾಲ್ವರು ನಮ್ಮಲ್ಲಿ ಇದ್ದಾರೆ.</verse>
				<verse number="24">ನೀನು ಇವರನ್ನು ಕರೆದುಕೊಂಡು ಹೋಗಿ, ಅವರೊಂದಿಗೆ ನಿನ್ನನ್ನು ಶುದ್ಧಿಮಾಡಿಕೊಂಡು, ಅವರು ತಮ್ಮ ಕ್ಷೌರ ಮಾಡಿಸಿಕೊಳ್ಳುವ ಖರ್ಚನ್ನು ನೀನೇ ಪೂರೈಸು. ಆಗ ನಿನ್ನ ವಿಷಯದಲ್ಲಿ ಕೇಳಿರುವ ಸಂಗತಿಗಳು ನಿಜವಲ್ಲ ಮತ್ತು ನೀನು ಮೋಶೆಯ ನಿಯಮಕ್ಕನುಸಾರವಾಗಿ ನಡೆದುಕೊಳ್ಳುತ್ತೀ ಎಂದು ಎಲ್ಲರಿಗೂ ತಿಳಿದುಬರುವುದು.</verse>
				<verse number="25">ಯೆಹೂದ್ಯರಲ್ಲದವರಿಂದ ಬಂದ ವಿಶ್ವಾಸಿಗಳಿಗಾದರೋ, ಅವರು ದೇವರಲ್ಲದವುಗಳಿಗೆ ಅರ್ಪಿತವಾದ ಮಲಿನ ಆಹಾರದಿಂದಲೂ ರಕ್ತದಿಂದಲೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ಅನೈತಿಕತೆಯಿಂದಲೂ ದೂರವಿರಬೇಕೆಂದು ನಾವು ಬರೆದ ನಮ್ಮ ತೀರ್ಮಾನವನ್ನು ತಿಳಿಸಿದ್ದೇವೆ,” ಎಂದರು.</verse>
				<verse number="26">ಮರುದಿನ ಪೌಲನು ಆ ನಾಲ್ವರೊಂದಿಗೆ ತನ್ನನ್ನು ಶುದ್ಧೀಕರಿಸಿಕೊಂಡನು. ಅನಂತರ ಶುದ್ಧಾಚಾರ ಮುಗಿಯುವ ದಿನಗಳ ಬಗ್ಗೆ ತಿಳಿಸುವುದಕ್ಕಾಗಿ ದೇವಾಲಯಕ್ಕೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಅರ್ಪಣೆಯು ಆಗಬೇಕೆಂಬುದರ ಬಗ್ಗೆಯೂ ಸೂಚಿಸಿದನು.</verse>
				<verse number="27">ಏಳು ದಿನಗಳ ಅವಧಿ ಮುಗಿಯುತ್ತಿದ್ದಾಗ, ಏಷ್ಯಾ ಪ್ರಾಂತದ ಕೆಲವು ಯೆಹೂದ್ಯ ಜನರು ದೇವಾಲಯದಲ್ಲಿ ಪೌಲನನ್ನು ಕಂಡರು. ಅವರು ಇಡೀ ಜನಸಮೂಹವನ್ನು ಉದ್ರೇಕಿಸಿ ಪೌಲನನ್ನು ಹಿಡಿದರು.</verse>
				<verse number="28">“ಇಸ್ರಾಯೇಲರೇ, ನಮಗೆ ಸಹಾಯಮಾಡಿರಿ! ನಮ್ಮ ಜನರಿಗೂ ನಮ್ಮ ನಿಯಮಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲಾ ಜನರಿಗೆ ಬೋಧಿಸುತ್ತಿರುವ ಮನುಷ್ಯನು ಇವನೇ. ಅಷ್ಟೇ ಅಲ್ಲ, ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪವಿತ್ರ ಸ್ಥಳವನ್ನು ಭ್ರಷ್ಟಗೊಳಿಸಿದ್ದಾನೆ,” ಎಂದು ಕೂಗಿ ಹೇಳಿದರು.</verse>
				<verse number="29">ಅವರು ಮೊದಲು ಪಟ್ಟಣದಲ್ಲಿ ಪೌಲನೊಂದಿಗೆ ಎಫೆಸದ ತ್ರೊಫಿಮ ಎಂಬವನು ಇದ್ದುದನ್ನು ಕಂಡಿದ್ದರಿಂದ, ಪೌಲನು ಈಗ ಅವನನ್ನು ದೇವಾಲಯದೊಳಗೆ ಕರೆದುಕೊಂಡು ಬಂದಿರಬಹುದೆಂದು ಅವರು ಭಾವಿಸಿದರು.</verse>
				<verse number="30">ಇಡೀ ಪಟ್ಟಣದಲ್ಲೇ ಕೋಲಾಹಲವೆದ್ದಿತು. ಜನರು ಎಲ್ಲಾ ದಿಕ್ಕುಗಳಿಂದ ಓಡೋಡುತ್ತಾ ಬಂದು. ಪೌಲನನ್ನು ಹಿಡಿದುಕೊಂಡು ದೇವಾಲಯದೊಳಗಿಂದ ಹೊರಗೆಳೆದುಕೊಂಡು ಹೋದರು. ಕೂಡಲೇ ದ್ವಾರಗಳನ್ನು ಮುಚ್ಚಿಬಿಟ್ಟರು.</verse>
				<verse number="31">ಅವರು ಪೌಲನನ್ನು ಕೊಲ್ಲುವುದಕ್ಕೆ ಪ್ರಯತ್ನಿಸುತ್ತಿದ್ದಾಗ, ಯೆರೂಸಲೇಮ ಪಟ್ಟಣದಲ್ಲೆಲ್ಲಾ ಗೊಂದಲವೆದ್ದಿದೆ ಎಂಬ ಸುದ್ದಿ ಅಲ್ಲಿದ್ದ ರೋಮ್ ಸಹಸ್ರಾಧಿಪತಿಗೆ ತಲುಪಿತು.</verse>
				<verse number="32">ಅವನು ತಕ್ಷಣವೇ ಸೈನಿಕರನ್ನೂ ಶತಾಧಿಪತಿಗಳನ್ನೂ ಕರೆದುಕೊಂಡು ಜನಸಮೂಹದ ಬಳಿಗೆ ಓಡಿಬಂದನು. ಅವರು ಸಹಸ್ರಾಧಿಪತಿಯನ್ನೂ ಅವನ ಸೈನಿಕರನ್ನೂ ಕಂಡಾಗ ಪೌಲನನ್ನು ಹೊಡೆಯುವುದನ್ನು ನಿಲ್ಲಿಸಿದರು.</verse>
				<verse number="33">ಸಹಸ್ರಾಧಿಪತಿ ಅಲ್ಲಿಗೆ ಬಂದು ಪೌಲನನ್ನು ಬಂಧಿಸಿ, ಅವನನ್ನು ಎರಡು ಸರಪಣಿಗಳಿಂದ ಕಟ್ಟಬೇಕೆಂದು ಆಜ್ಞಾಪಿಸಿದನು. ಅನಂತರ “ಇವನು ಯಾರು? ಇವನು ಮಾಡಿದ್ದೇನು?” ಎಂದು ವಿಚಾರಿಸಿದನು.</verse>
				<verse number="34">ಜನಸಮೂಹದಲ್ಲಿದ್ದ ಇತರರು ವಿವಿಧ ರೀತಿಯಿಂದ ಕೂಗುತ್ತಿರಲು ಗಲಭೆಯ ನಿಮಿತ್ತ ಸಹಸ್ರಾಧಿಪತಿಗೆ ಸತ್ಯಾಂಶ ತಿಳಿಯಲಾಗಲಿಲ್ಲ. ಆದ್ದರಿಂದ ಪೌಲನನ್ನು ಸೈನಿಕ ಪಾಳ್ಯದೊಳಗೆ ತೆಗೆದುಕೊಂಡು ಹೋಗಲು ಆಜ್ಞಾಪಿಸಿದನು.</verse>
				<verse number="35">ಪೌಲನನ್ನು ಮೆಟ್ಟಲುಗಳವರೆಗೆ ತೆಗೆದುಕೊಂಡು ಹೋದಾಗ ಜನರ ರೋಷ ಇನ್ನೂ ಬಲವಾದುದ್ದರಿಂದ ಸೈನಿಕರು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು.</verse>
				<verse number="36">ಏಕೆಂದರೆ ಮುನ್ನುಗ್ಗುತ್ತಿದ್ದ ಜನರ ಗುಂಪು, “ಅವನನ್ನು ಕೊಲ್ಲಿರಿ!” ಎಂದು ಆರ್ಭಟಿಸುತ್ತಿತ್ತು.</verse>
				<verse number="37">ಸೈನಿಕರು ಪೌಲನನ್ನು ಅವರ ಪಾಳ್ಯದೊಳಗೆ ಒಯ್ಯುತ್ತಿದ್ದಾಗ, ಅವನು ಸಹಸ್ರಾಧಿಪತಿಗೆ, “ನಾನು ನಿನ್ನೊಡನೆ ಸ್ವಲ್ಪ ಮಾತನಾಡುವುದಕ್ಕೆ ಅಪ್ಪಣೆಯಾದೀತೇ?” ಎಂದು ಕೇಳಲು, ಅದಕ್ಕೆ ಅವನು, “ನಿನಗೆ ಗ್ರೀಕ್ ಭಾಷೆಯೂ ಗೊತ್ತಿದೆಯೋ?”</verse>
				<verse number="38">“ಹಾಗಾದರೆ ಕೆಲವು ಸಮಯದ ಹಿಂದೆ ದಂಗೆಯೆಬ್ಬಿಸಿ ನಾಲ್ಕು ಸಾವಿರ ಉಗ್ರಗಾಮಿಗಳನ್ನು ಅರಣ್ಯಕ್ಕೆ ಕರೆದುಕೊಂಡುಹೋದ ಈಜಿಪ್ಟಿನವನು ನೀನಲ್ಲವೋ?” ಎಂದನು.</verse>
				<verse number="39">ಅದಕ್ಕೆ ಪೌಲನು, “ನಾನೊಬ್ಬ ಯೆಹೂದ್ಯನು, ಕಿಲಿಕ್ಯದ ತಾರ್ಸದವನು, ಪ್ರಸಿದ್ಧ ಪಟ್ಟಣದ ನಾಗರಿಕನು. ದಯವಿಟ್ಟು ಜನರೊಂದಿಗೆ ಮಾತನಾಡಲು ನನಗೆ ಅವಕಾಶ ಕೊಡಬೇಕು,” ಎಂದು ಸಹಸ್ರಾಧಿಪತಿಯನ್ನು ಬೇಡಿಕೊಂಡನು.</verse>
				<verse number="40">ಸಹಸ್ರಾಧಿಪತಿಯ ಅಪ್ಪಣೆ ಪಡೆದುಕೊಂಡು, ಪೌಲನು ಮೆಟ್ಟಲುಗಳ ಮೇಲೆ ನಿಂತುಕೊಂಡು ಜನಸಮೂಹಕ್ಕೆ ಸುಮ್ಮನಿರುವಂತೆ ಸನ್ನೆಮಾಡಲು, ಅವರು ಬಹು ನಿಶ್ಶಬ್ದರಾದಾಗ ಅವನು ಹೀಬ್ರೂ ಭಾಷೆಯಲ್ಲಿ ಅವರಿಗೆ ಹೀಗೆಂದನು:</verse>
			</chapter>
			<chapter number="22">
				<verse number="1">“ಸಹೋದರರೇ, ತಂದೆಗಳೇ, ಈಗ ನಾನು ನಿಮಗೆ ಮಾಡುವ ಪ್ರತಿವಾದಕ್ಕೆ ಕಿವಿಗೊಡಿರಿ,” ಎಂದು ಪ್ರಾರಂಭಿಸಿದನು.</verse>
				<verse number="2">ಅವನು ತಮ್ಮೊಂದಿಗೆ ಹೀಬ್ರೂ ಭಾಷೆಯಲ್ಲಿ ಮಾತನಾಡುವುದನ್ನು ಕೇಳಿದಾಗ ಅವರು ಮತ್ತಷ್ಟು ನಿಶ್ಶಬ್ದರಾದರು. ಆಗ ಪೌಲನು:</verse>
				<verse number="3">“ನಾನು ಕಿಲಿಕ್ಯದ ತಾರ್ಸದಲ್ಲಿ ಜನಿಸಿದ ಯೆಹೂದ್ಯನು, ಈ ಪಟ್ಟಣದಲ್ಲಿಯೇ ಬೆಳೆದವನು, ಗಮಲಿಯೇಲನ ಪಾದ ಸನ್ನಿಧಿಯಲ್ಲಿ ನಮ್ಮ ಪಿತೃಗಳ ನಿಯಮವನ್ನು ಸೂಕ್ಷ್ಮವಾಗಿ ಅಭ್ಯಾಸ ಮಾಡಿದೆ. ದೇವರ ವಿಷಯದಲ್ಲಿ, ಇಂದು ನೀವೆಲ್ಲರೂ ಇರುವಂತೆಯೇ ನಾನೂ ಆಸಕ್ತಿವುಳ್ಳವನಾಗಿದ್ದೆನು.</verse>
				<verse number="4">ಈ ಮಾರ್ಗದವರನ್ನು ಸಾಯುವಷ್ಟು ಹಿಂಸಿಸಿದೆನು. ಸ್ತ್ರೀಪುರುಷರೆನ್ನದೆ ಅವರನ್ನು ಬಂಧಿಸಿ ಅವರನ್ನು ಸೆರೆಮನೆಗೆ ಹಾಕಿಸುತ್ತಿದ್ದೆನು,</verse>
				<verse number="5">ಮಹಾಯಾಜಕನೂ ಹಿರಿಸಭೆಯವರೆಲ್ಲರೂ ಇದಕ್ಕೆ ಸಾಕ್ಷಿ. ಅವರಿಂದಲೇ ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ದಂಡಿಸುವುದಕ್ಕಾಗಿಯೂ ಸೆರೆಹಿಡಿದು ಯೆರೂಸಲೇಮಿಗೆ ತರುವುದಕ್ಕಾಗಿಯೂ ದಮಸ್ಕಕ್ಕೆ ಪ್ರಯಾಣಮಾಡಿದೆನು.</verse>
				<verse number="6">“ಸುಮಾರು ಮಧ್ಯಾಹ್ನದ ಸಮಯಕ್ಕೆ ನಾನು ದಮಸ್ಕದ ಹತ್ತಿರದಲ್ಲಿದ್ದೆನು. ಇದ್ದಕ್ಕಿದ್ದಂತೆ ಆಕಾಶದಿಂದ ಮಹಾ ಬೆಳಕು ನನ್ನ ಸುತ್ತಲೂ ಹೊಳೆಯಿತು.</verse>
				<verse number="7">ನಾನು ನೆಲದ ಮೇಲೆ ಬಿದ್ದೆನು. ಆಗ, ‘ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ?’ ಎಂದು ಒಂದು ಸ್ವರವು ನನಗೆ ಹೇಳುವುದನ್ನು ಕೇಳಿಸಿಕೊಂಡೆನು.</verse>
				<verse number="8">“ನಾನು, ‘ಸ್ವಾಮಿ, ತಾವು ಯಾರು?’ ಎಂದು ಕೇಳಲು, “ ‘ನೀನು ಹಿಂಸೆಪಡಿಸುತ್ತಿರುವ ನಜರೇತಿನ ಯೇಸುವೇ ನಾನು,’ ಎಂದು ಅವರು ನನಗೆ ಹೇಳಿದರು.</verse>
				<verse number="9">ನನ್ನ ಜೊತೆಯಲ್ಲಿದ್ದವರು ಬೆಳಕನ್ನು ಕಂಡರು. ಆದರೆ ನನ್ನ ಕೂಡ ಮಾತನಾಡುತ್ತಿದ್ದ ಸ್ವರವು ಅವರಿಗೆ ಕೇಳಿಸಲಿಲ್ಲ.</verse>
				<verse number="10">“ಆಗ ನಾನು, ‘ಸ್ವಾಮಿ, ನಾನೇನು ಮಾಡಬೇಕು?’ ಎಂದು ಕೇಳಲು, “ ‘ಎದ್ದೇಳು, ದಮಸ್ಕದೊಳಗೆ ಹೋಗು, ನೀನು ಏನೇನು ಮಾಡಬೇಕಾಗಿದೆಯೋ ಅದೆಲ್ಲವನ್ನು ನಿನಗೆ ಅಲ್ಲಿ ಹೇಳಲಾಗುವುದು,’ ಎಂದು ಕರ್ತ ಯೇಸು ನನಗೆ ಹೇಳಿದರು.</verse>
				<verse number="11">ಆ ಬೆಳಕಿನ ಉಜ್ವಲ ಪ್ರಕಾಶದ ನಿಮಿತ್ತ ನನ್ನ ಕಣ್ಣು ಕುರುಡಾಗಿದ್ದರಿಂದ ನನ್ನ ಜೊತೆಯಲ್ಲಿದ್ದವರು ನನ್ನ ಕೈಹಿಡಿದು ದಮಸ್ಕದೊಳಗೆ ನಡೆಸಿಕೊಂಡು ಹೋದರು.</verse>
				<verse number="12">“ಅನನೀಯ ಎಂಬ ಹೆಸರಿನವನೊಬ್ಬನು ನನ್ನ ಬಳಿ ಬಂದನು. ಅವನು ಮೋಶೆಯ ನಿಯಮಕ್ಕನುಗುಣವಾಗಿ ಭಕ್ತಿವಂತನೂ ಆ ಸ್ಥಳದ ಯೆಹೂದ್ಯರೆಲ್ಲರಿಂದ ಸಾಕ್ಷಿಹೊಂದಿದವನೂ ಆಗಿದ್ದನು.</verse>
				<verse number="13">ಅವನು ನನ್ನ ಬಳಿ ನಿಂತುಕೊಂಡು, ‘ಸಹೋದರ ಸೌಲನೇ, ನೀನು ದೃಷ್ಟಿಯನ್ನು ಪಡೆದುಕೋ,’ ಎಂದನು. ಆ ಗಳಿಗೆಯಲ್ಲಿಯೇ ನಾನು ದೃಷ್ಟಿಯನ್ನು ಪಡೆದು ಅವನನ್ನು ಕಂಡೆನು.</verse>
				<verse number="14">“ಆಗ ಅವನು, ‘ನಮ್ಮ ಪಿತೃಗಳ ದೇವರು ತಮ್ಮ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕಾಗಿಯೂ ನೀತಿವಂತ ಆಗಿರುವ ಒಬ್ಬರನ್ನು ಕಾಣುವುದಕ್ಕಾಗಿಯೂ ಅವರ ಬಾಯಿಂದ ಒಂದು ಮಾತನ್ನು ಕೇಳುವುದಕ್ಕಾಗಿಯೂ ನಿನ್ನನ್ನು ಮುಂದಾಗಿಯೇ ನೇಮಿಸಿದ್ದಾರೆ.</verse>
				<verse number="15">ಏಕೆಂದರೆ ನೀನು ಕಂಡದ್ದಕ್ಕೂ ಕೇಳಿದ್ದಕ್ಕೂ ಎಲ್ಲಾ ಜನರಿಗೆ ಅವರ ಸಾಕ್ಷಿಯಾಗಿರುವೆ.</verse>
				<verse number="16">ಈಗ ನೀನು ತಡಮಾಡುವುದೇಕೆ? ಎದ್ದೇಳು, ಅವರ ಹೆಸರನ್ನು ಕರೆದು, ದೀಕ್ಷಾಸ್ನಾನವನ್ನು ಹೊಂದಿ ನಿನ್ನ ಪಾಪಗಳನ್ನು ತೊಳೆದುಕೋ,’ ಎಂದನು.</verse>
				<verse number="17">“ನಾನು ಯೆರೂಸಲೇಮಿಗೆ ಹಿಂದಿರುಗಿ ಬಂದು ದೇವಾಲಯದಲ್ಲಿ ಪ್ರಾರ್ಥನೆ ಮಾಡುತ್ತಿದ್ದಾಗ ಆತ್ಮಪರವಶನಾದೆನು.</verse>
				<verse number="18">ಆಗ ಕರ್ತ ಯೇಸು ನನ್ನೊಂದಿಗೆ ಮಾತನಾಡುತ್ತಿರುವುದನ್ನು ಕಂಡೆನು. ಅವರು, ‘ತಡಮಾಡದೆ! ತಕ್ಷಣವೇ ಯೆರೂಸಲೇಮನ್ನು ಬಿಟ್ಟು ಹೊರಟು ಹೋಗು, ಏಕೆಂದರೆ ನೀನು ನನ್ನನ್ನು ಕುರಿತು ಹೇಳುವ ಸಾಕ್ಷಿಯನ್ನು ಅವರು ಸ್ವೀಕರಿಸುವುದಿಲ್ಲ,’ ಎಂದರು.</verse>
				<verse number="19">“ಅದಕ್ಕೆ ನಾನು, ‘ಸ್ವಾಮಿ, ಎಲ್ಲಾ ಸಭಾಮಂದಿರಗಳಲ್ಲಿಯೂ ನಿಮ್ಮಲ್ಲಿ ನಂಬಿಕೆಯಿಟ್ಟವರನ್ನು ಬಂಧಿಸಿ, ಹೊಡೆದು ಸೆರೆಮನೆಗೆ ಹಾಕಿಸುತ್ತಿದ್ದೇನೆಂದು ಈ ಜನರು ಬಲ್ಲರು.</verse>
				<verse number="20">ನಿಮ್ಮ ಸಾಕ್ಷಿಯಾದ ಸ್ತೆಫನನ ರಕ್ತ ಸುರಿಸಿದಾಗ ಅದಕ್ಕೆ ನಾನೂ ಸಮ್ಮತಿ ಕೊಟ್ಟು ಅವನನ್ನು ಕೊಲ್ಲುವವರ ಬಟ್ಟೆಗಳನ್ನು ಕಾಯುತ್ತಾ ನಿಂತಿದ್ದೆನು,’ ಎಂದೆನು.</verse>
				<verse number="21">“ಆಗ ಕರ್ತ ಯೇಸುವು, ‘ಹೋಗು, ನಾನು ಯೆಹೂದ್ಯರಲ್ಲದವರ ಬಳಿಗೆ ನಿನ್ನನ್ನು ದೂರಪ್ರದೇಶಗಳಿಗೆ ಕಳುಹಿಸುವೆನು,’ ಎಂದು ನನಗೆ ಹೇಳಿದರು.”</verse>
				<verse number="22">ಇದನ್ನು ಹೇಳುವವರೆಗೆ ಜನರು ಪೌಲನ ಮಾತುಗಳನ್ನು ಗಮನವಿಟ್ಟು ಕೇಳುತ್ತಿದ್ದರು. ಅನಂತರ ಅವರು ತಮ್ಮ ಸ್ವರವೆತ್ತಿ, “ಇಂಥವನನ್ನು ಭೂಲೋಕದಿಂದ ತೊಲಗಿಸಿರಿ! ಇವನು ಜೀವಿಸುವುದಕ್ಕೆ ಯೋಗ್ಯನಲ್ಲ!” ಎಂದು ಕೂಗಿದರು.</verse>
				<verse number="23">ಅವರು ಅರಚುತ್ತ ತಮ್ಮ ಮೇಲಂಗಿಗಳನ್ನು ಹರಿಯುತ್ತ ಗಾಳಿಯಲ್ಲಿ ಮಣ್ಣು ತೂರುತ್ತಿರಲು,</verse>
				<verse number="24">ಸಹಸ್ರಾಧಿಪತಿಯು ಪೌಲನನ್ನು ಸೈನಿಕರ ಪಾಳ್ಯದೊಳಗೆ ಒಯ್ಯಬೇಕೆಂದು, ಅವನನ್ನು ಕೊರಡೆಗಳಿಂದ ಹೊಡೆದು ಯಾವ ಅಪರಾಧಕ್ಕಾಗಿ ಜನರು ಅವನಿಗೆ ವಿರೋಧವಾಗಿ ಅರಚುತ್ತಿದ್ದರು ಎಂಬುದನ್ನು ಅವನಿಂದ ವಿಚಾರಿಸಬೇಕೆಂದು ಆಜ್ಞಾಪಿಸಿದನು.</verse>
				<verse number="25">ಆದರೆ ಅವರು ಅವನನ್ನು ಹೊಡೆಯುವುದಕ್ಕೆ ಬಾರುಕೋಲನ್ನು ಚಾಚಿದಾಗ ಪೌಲನು ಅಲ್ಲಿ ನಿಂತಿದ್ದ ಶತಾಧಿಪತಿಗೆ, “ಅಪರಾಧಿಯೆಂದು ಸಿದ್ಧವಾಗುವ ಮೊದಲೇ ರೋಮ್ ಪೌರನನ್ನು ಕೊರಡೆಗಳಿಂದ ಹೊಡೆಯುವುದು ನ್ಯಾಯವಾದದ್ದೋ?” ಎಂದು ಕೇಳಿದನು.</verse>
				<verse number="26">ಶತಾಧಿಪತಿ ಈ ಮಾತುಗಳನ್ನು ಕೇಳಿದಾಗ, ಸಹಸ್ರಾಧಿಪತಿಯ ಬಳಿಗೆ ಹೋಗಿ ಇದನ್ನು ವರದಿ ಮಾಡಿ, “ಇವನು ರೋಮ್ ಪೌರನು. ಈಗ ನೀನೇನು ಮಾಡಬೇಕೆಂದಿದ್ದೀ?” ಎಂದು ಅವನನ್ನು ಪ್ರಶ್ನಿಸಿದನು.</verse>
				<verse number="27">ಸಹಸ್ರಾಧಿಪತಿಯು ಪೌಲನ ಬಳಿಗೆ ಹೋಗಿ, “ನೀನು ರೋಮ್ ಪೌರನೋ, ಹೇಳು?” ಎಂದು ಕೇಳಿದ್ದಕ್ಕೆ, ಅವನು, “ಹೌದು,” ಎಂದನು.</verse>
				<verse number="28">“ನಾನು ಈ ಪೌರತ್ವ ಪಡೆಯಬೇಕಾದರೆ ಅದಕ್ಕೆ ನಾನು ಬಹಳ ಹಣ ಕೊಡಬೇಕಾಯಿತು,” ಎಂದು ಸಹಸ್ರಾಧಿಪತಿಯು ಹೇಳಲು, ಪೌಲನು, “ಆದರೆ ನಾನು ಹುಟ್ಟಿದ ದಿನದಿಂದಲೇ ರೋಮಿನ ಪೌರನಾಗಿದ್ದೇನೆ,” ಎಂದನು.</verse>
				<verse number="29">ಪೌಲನನ್ನು ಪ್ರಶ್ನಿಸಲು ಬಂದವರು ತಕ್ಷಣವೇ ಬಿಟ್ಟುಹೋದರು. ಮಾತ್ರವಲ್ಲದೆ ಪೌಲನು ರೋಮ್ ಪೌರನೆಂದು ಗ್ರಹಿಸಿದ ಅವನನ್ನು ಬೇಡಿಗಳಿಂದ ಬಂಧಿಸಿದ್ದರಿಂದ ಸಹಸ್ರಾಧಿಪತಿಯೂ ಭಯಪಟ್ಟನು.</verse>
				<verse number="30">ಯೆಹೂದ್ಯರು ಪೌಲನ ವಿರುದ್ಧ ಏಕೆ ದೋಷಾರೋಪಣೆ ಮಾಡುತ್ತಿದ್ದಾರೆ ಎಂಬುದಕ್ಕೆ ನಿಜಸಂಗತಿಯನ್ನು ಕಂಡುಹಿಡಿಯಲು ಸಹಸ್ರಾಧಿಪತಿಯು ಅಪೇಕ್ಷೆಪಟ್ಟನು. ಮರುದಿನ ಪೌಲನನ್ನು ಬಿಡುಗಡೆ ಮಾಡಿ, ಮುಖ್ಯಯಾಜಕರೂ ನ್ಯಾಯಸಭೆಯೂ ಕೂಡಿಬರಬೇಕೆಂದು ಅಪ್ಪಣೆಮಾಡಿದನು. ಆಮೇಲೆ ಪೌಲನನ್ನು ತಂದು ಅವರ ಎದುರಿನಲ್ಲಿ ನಿಲ್ಲಿಸಿದರು.</verse>
			</chapter>
			<chapter number="23">
				<verse number="1">ಪೌಲನು ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ನನ್ನ ಸಹೋದರರೇ, ಇಂದಿನವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ನಾನು ದೇವರ ಮುಂದೆ ನಡೆದುಕೊಂಡಿದ್ದೇನೆ,” ಎಂದನು.</verse>
				<verse number="2">ಅದಕ್ಕೆ ಮಹಾಯಾಜಕ ಅನನೀಯನು ಪೌಲನ ಬಳಿ ನಿಂತಿದ್ದವರಿಗೆ ಅವನ ಬಾಯಮೇಲೆ ಹೊಡೆಯಬೇಕೆಂದು ಆಜ್ಞಾಪಿಸಿದನು.</verse>
				<verse number="3">ಆಗ ಪೌಲನು ಅವನಿಗೆ, “ಸುಣ್ಣ ಬಳಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವರು. ಮೋಶೆಯ ನಿಯಮದ ಪ್ರಕಾರ ನನ್ನ ನ್ಯಾಯವಿಚಾರಣೆ ಮಾಡಲು ನೀನು ಕುಳಿತುಕೊಂಡು, ನಿಯಮಕ್ಕೆ ವಿರುದ್ಧವಾಗಿ ನನ್ನನ್ನು ಹೊಡೆಯಬೇಕೆಂದು ಆಜ್ಞಾಪಿಸುತ್ತೀಯೋ?” ಎಂದನು.</verse>
				<verse number="4">ಪೌಲನ ಹತ್ತಿರ ನಿಂತಿದ್ದವರು, “ದೇವರು ನೇಮಿಸಿದ ಮಹಾಯಾಜಕನನ್ನು ನಿಂದಿಸುತ್ತಿದ್ದೀಯಾ?” ಎಂದು ಹೇಳಲು,</verse>
				<verse number="5">“ಸಹೋದರರೇ, ಮಹಾಯಾಜಕನೆಂದು ನನಗೆ ತಿಳಿಯಲಿಲ್ಲ. ಏಕೆಂದರೆ, ‘ನಿನ್ನ ಜನರ ಅಧಿಪತಿಯ ಕುರಿತಾಗಿ ಕೆಟ್ಟದ್ದನ್ನು ಮಾತನಾಡಬಾರದು’ ಎಂದು ಪವಿತ್ರ ವೇದದಲ್ಲಿ ಬರೆದಿದೆ,” ಎಂದು ಪೌಲನು ಹೇಳಿದನು.</verse>
				<verse number="6">ಅಲ್ಲಿ ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯರು, ಇನ್ನು ಕೆಲವರು ಫರಿಸಾಯರು ಎಂಬುದನ್ನು ಪೌಲನು ತಿಳಿದುಕೊಂಡು ನ್ಯಾಯಸಭೆಯಲ್ಲಿ, “ನನ್ನ ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು. ಸತ್ತವರ ಪುನರುತ್ಥಾನದ ನಿರೀಕ್ಷೆಯ ವಿಷಯದಲ್ಲಿ ನಾನು ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಕೂಗಿ ಹೇಳಿದನು.</verse>
				<verse number="7">ಪೌಲನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದ ಉಂಟಾಯಿತು. ಇದರಿಂದ ಸಮೂಹವು ವಿಭಾಗವಾಯಿತು.</verse>
				<verse number="8">ಏಕೆಂದರೆ ಸದ್ದುಕಾಯರು ಪುನರುತ್ಥಾನ ಇಲ್ಲವೆಂದೂ ದೇವದೂತರಾಗಲಿ, ಆತ್ಮಗಳಾಗಲಿ ಇಲ್ಲವೆಂದೂ ಹೇಳುತ್ತಿದ್ದರು. ಫರಿಸಾಯರು ಇವೆರಡನ್ನೂ ಒಪ್ಪಿಕೊಳ್ಳುತ್ತಿದ್ದರು.</verse>
				<verse number="9">ಆಗ ದೊಡ್ಡ ಗಲಭೆಯೇ ಉಂಟಾಯಿತು. ಫರಿಸಾಯರ ಪಕ್ಷದ ನಿಯಮ ಬೋಧಕರಲ್ಲಿ ಕೆಲವರು ಎದ್ದು, “ನಾವು ಈ ಮನುಷ್ಯನಲ್ಲಿ ಯಾವುದೇ ತಪ್ಪನ್ನು ಕಾಣುವುದಿಲ್ಲ. ಆತ್ಮವಾಗಲಿ, ದೇವದೂತನಾಗಲಿ ಇವನೊಂದಿಗೆ ಮಾತನಾಡಿರಬಹುದು,” ಎಂದು ವಾದಿಸಿದರು.</verse>
				<verse number="10">ಜನಸಮೂಹವು ಪೌಲನನ್ನು ಎಳೆದು ತುಂಡುತುಂಡಾಗಿ ಮಾಡುವರೇನೋ ಎಂದು ಸಹಸ್ರಾಧಿಪತಿಗೆ ಬಹಳ ಭಯವಾಯಿತು. ಸೈನಿಕರ ಗುಂಪುಗಳು ಕೆಳಗಿಳಿದು ಹೋಗಿ ಬಲಪ್ರಯೋಗದಿಂದ ಪೌಲನನ್ನು ಎತ್ತಿಕೊಂಡು ಸೈನಿಕ ಪಾಳ್ಯದೊಳಗೆ ಬರಬೇಕೆಂದು ಅವನು ಸೈನಿಕರಿಗೆ ಆಜ್ಞಾಪಿಸಿದನು.</verse>
				<verse number="11">ಮರುದಿನ ರಾತ್ರಿ ಕರ್ತ ಯೇಸು ಪೌಲನ ಬಳಿಯಲ್ಲಿ ನಿಂತುಕೊಂಡು, “ಧೈರ್ಯದಿಂದಿರು! ನೀನು ಯೆರೂಸಲೇಮಿನಲ್ಲಿ ನನ್ನ ವಿಷಯದಲ್ಲಿ ಸಾಕ್ಷಿ ಕೊಟ್ಟಂತೆಯೇ ರೋಮಿನಲ್ಲಿಯೂ ಸಾಕ್ಷಿಕೊಡತಕ್ಕದ್ದು,” ಎಂದರು.</verse>
				<verse number="12">ಮರುದಿನ ಯೆಹೂದ್ಯರು ರಹಸ್ಯವಾಗಿ ಕೂಡಿಬಂದು, ಪೌಲನನ್ನು ತಾವು ಕೊಲ್ಲುವವರೆಗೆ ಅನ್ನಪಾನ ಸ್ವೀಕರಿಸುವುದಿಲ್ಲವೆಂದು ಶಪಥಮಾಡಿಕೊಂಡರು.</verse>
				<verse number="13">ಈ ಒಳಸಂಚಿನಲ್ಲಿ ನಾಲ್ವತ್ತಕ್ಕಿಂತಲೂ ಹೆಚ್ಚು ಜನ ಪುರುಷರಿದ್ದರು.</verse>
				<verse number="14">ಅವರು ಮುಖ್ಯಯಾಜಕರ ಹಾಗೂ ಹಿರಿಯರ ಬಳಿಗೆ ಹೋಗಿ, “ಪೌಲನನ್ನು ಕೊಲ್ಲುವವರೆಗೆ ನಾವು ಊಟಮಾಡುವುದಿಲ್ಲ ಎಂದು ಗಂಭೀರ ಶಪಥಮಾಡಿದ್ದೇವೆ.</verse>
				<verse number="15">ಆದ್ದರಿಂದ ಈಗ ವಿಚಾರಣೆಯ ಬಗ್ಗೆ ಹೆಚ್ಚಿನ ನಿರ್ದಿಷ್ಟವಾದ ಮಾಹಿತಿಗಳನ್ನು ತಿಳಿದುಕೊಳ್ಳಬೇಕೆಂಬ ನೆಪದಿಂದ ಪೌಲನನ್ನು ನಿಮ್ಮ ಮುಂದೆ ತರುವಂತೆ ನೀವೂ ನ್ಯಾಯಸಭೆಯೂ ಸಹಸ್ರಾಧಿಪತಿಯನ್ನು ಬೇಡಿಕೊಳ್ಳಿರಿ. ಇಲ್ಲಿಗೆ ಬರುವ ಮೊದಲೇ ಪೌಲನನ್ನು ನಾವು ಕೊಂದುಬಿಡುತ್ತೇವೆ,” ಎಂದರು.</verse>
				<verse number="16">ಈ ಒಳಸಂಚು ಪೌಲನ ಸಹೋದರಿಯ ಮಗನಿಗೆ ತಿಳಿಯಲು ಅವನು ಸೈನಿಕ ಪಾಳ್ಯದೊಳಗೆ ಹೋಗಿ ಪೌಲನಿಗೆ ತಿಳಿಸಿದನು.</verse>
				<verse number="17">ಆಗ ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು, “ಈ ಯುವಕನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿರಿ. ಏಕೆಂದರೆ ಇವನಿಗೆ ತಿಳಿಸಲು ಏನೋ ವಿಷಯವಿದೆಯಂತೆ,” ಎಂದನು.</verse>
				<verse number="18">ಅದರಂತೆ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ, “ನಿಮಗೆ ತಿಳಿಸತಕ್ಕ ವಿಷಯವಿದೆಯೆಂದು ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯುವಕನನ್ನು ನಿಮ್ಮ ಬಳಿ ತರುವಂತೆ ಬೇಡಿಕೊಂಡಿದ್ದಾನೆ,” ಎಂದನು.</verse>
				<verse number="19">ಸಹಸ್ರಾಧಿಪತಿಯು ಯುವಕನ ಕೈಹಿಡಿದು ಏಕಾಂತವಾಗಿ ಪಕ್ಕಕ್ಕೆ ಕರೆದು, “ನೀನು ನನಗೆ ಹೇಳಬೇಕಾದದ್ದು ಏನು?” ಎಂದನು.</verse>
				<verse number="20">ಆ ಯುವಕನು, “ಪೌಲನ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ಪಡೆಯುವ ಅಪೇಕ್ಷೆಯ ನೆಪದಲ್ಲಿ ಅವನನ್ನು ನ್ಯಾಯಸಭೆಯ ಮುಂದೆ ಕರೆತರುವಂತೆ ನಿಮ್ಮನ್ನು ಕೇಳಿಕೊಳ್ಳಲು ಯೆಹೂದ್ಯರು ತೀರ್ಮಾನಿಸಿಕೊಂಡಿದ್ದಾರೆ.</verse>
				<verse number="21">ನೀವು ಅವರ ಮಾತಿಗೆ ಒಪ್ಪಿಕೊಳ್ಳಬೇಡಿ, ಏಕೆಂದರೆ ನಾಲ್ವತ್ತಕ್ಕಿಂತಲೂ ಹೆಚ್ಚು ಜನರು ಅವನಿಗಾಗಿ ಹೊಂಚುಹಾಕಿದ್ದಾರೆ. ಅವನನ್ನು ಕೊಲ್ಲುವವರೆಗೆ ಊಟಮಾಡುವುದಿಲ್ಲ, ಪಾನ ಮಾಡುವುದಿಲ್ಲ, ಎಂದು ಅವರು ಶಪಥ ಮಾಡಿದ್ದಾರೆ. ಅವರ ಬೇಡಿಕೆಗೆ ನಿಮ್ಮ ಒಪ್ಪಿಗೆಯನ್ನೇ ಈಗ ಅವರು ಎದುರುನೋಡುತ್ತಾ ಇದ್ದಾರೆ,” ಎಂದು ಹೇಳಿದನು.</verse>
				<verse number="22">“ಈ ವಿಷಯವನ್ನು ನನಗೆ ವರದಿ ಮಾಡಿದ್ದನ್ನು ಯಾರಿಗೂ ಹೇಳಬೇಡ,” ಎಂದು ಆ ಯುವಕನಿಗೆ ಎಚ್ಚರಿಕೆಯನ್ನು ನೀಡಿ ಅವನನ್ನು ಸಹಸ್ರಾಧಿಪತಿ ಕಳುಹಿಸಿಕೊಟ್ಟನು.</verse>
				<verse number="23">ಆಮೇಲೆ ಸಹಸ್ರಾಧಿಪತಿಯು ತನ್ನ ಇಬ್ಬರು ಶತಾಧಿಪತಿಗಳನ್ನು ಕರೆದು, “ಈ ರಾತ್ರಿ ಒಂಬತ್ತು ಗಂಟೆಗೆ ಕೈಸರೈಯಕ್ಕೆ ಹೋಗಲು ಇನ್ನೂರು ಜನ ಸೈನಿಕರನ್ನೂ ಎಪ್ಪತ್ತು ಕುದುರೆ ಸವಾರರನ್ನೂ ಇನ್ನೂರು ಜನ ಭರ್ಜಿಧರಿಸಿದವರನ್ನೂ ಸಿದ್ಧಗೊಳಿಸಿರಿ.</verse>
				<verse number="24">ಕುದುರೆಗಳನ್ನು ಸಿದ್ಧಮಾಡಿ ಪೌಲನನ್ನು ಹತ್ತಿಸಿ ಅವನು ಸುರಕ್ಷಿತವಾಗಿ ರಾಜ್ಯಪಾಲ ಫೇಲಿಕ್ಸನ ಬಳಿಗೆ ತಲುಪುವಂತೆ ವ್ಯವಸ್ಥೆಮಾಡಿರಿ,” ಎಂದು ಆಜ್ಞಾಪಿಸಿದನು.</verse>
				<verse number="25">ಅವರಿಗೆ ಒಂದು ಪತ್ರವನ್ನು ಹೀಗೆ ಬರೆದುಕೊಟ್ಟನು:</verse>
				<verse number="26">ಮಹಾಪ್ರಭುಗಳಾದ ರಾಜ್ಯಪಾಲ ಫೇಲಿಕ್ಸ್, ಅವರಿಗೆ ಕ್ಲೌದ್ಯ ಲೂಸ್ಯನು, ಮಾಡುವ ವಂದನೆಗಳು.</verse>
				<verse number="27">ಈ ಪೌಲನನ್ನು ಯೆಹೂದ್ಯರು ಬಂಧಿಸಿ, ಇವನನ್ನು ಕೊಲ್ಲಬೇಕೆಂದಿದ್ದರು. ಆದರೆ ನಾನು ಸೈನಿಕರೊಂದಿಗೆ ಹೋಗಿ ಇವನನ್ನು ಬಿಡಿಸಿದೆನು. ಇವನು ರೋಮ್ ಪೌರ ಎಂದು ನನಗೆ ಗೊತ್ತಾಯಿತು.</verse>
				<verse number="28">ಅವರು ಏಕೆ ಪೌಲನ ಮೇಲೆ ದೋಷಾರೋಪಣೆ ಮಾಡುತ್ತಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಅಪೇಕ್ಷಿಸಿ ಇವನನ್ನು ಅವರ ನ್ಯಾಯಸಭೆಯ ಮುಂದೆ ಕರೆದುಕೊಂಡು ಹೋದೆನು.</verse>
				<verse number="29">ಇವನ ಮೇಲಿನ ದೋಷಾರೋಪಣೆ ಅವರ ನಿಯಮದ ಪ್ರಶ್ನೆಗಳಿಗೆ ಸಂಬಂಧಪಟ್ಟದ್ದು. ಇವನಲ್ಲಿ ಮರಣದಂಡನೆಗಾಗಲಿ, ಸೆರೆಮನೆಗಾಗಲಿ ಯೋಗ್ಯವಾದ ಯಾವ ಅಪರಾಧಗಳೂ ಇಲ್ಲವೆಂದು ನಾನು ಕಂಡುಕೊಂಡಿದ್ದೇನೆ.</verse>
				<verse number="30">ಆದರೂ ಪೌಲನ ವಿರೋಧವಾಗಿ ಒಂದು ಒಳಸಂಚು ನಡೆದಿದೆ ಎಂದು ನನಗೆ ರಹಸ್ಯ ಸುದ್ದಿ ಬಂದದ್ದರಿಂದ, ಕೂಡಲೇ ಇವನನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ಇವನಿಗೆ ವಿರೋಧವಾದ ಆರೋಪಣೆಯನ್ನು ನಿಮಗೆ ಸಲ್ಲಿಸಬೇಕೆಂದು ಇವನ ವಿರೋಧಿಗಳಿಗೆ ಅಪ್ಪಣೆ ಕೊಟ್ಟಿದ್ದೇನೆ.</verse>
				<verse number="31">ಸೈನಿಕರು ಈ ಆಜ್ಞೆಯಂತೆ, ರಾತ್ರಿಯಲ್ಲಿ ಪೌಲನನ್ನು ತಮ್ಮೊಂದಿಗೆ ಕರೆದುಕೊಂಡು ಅಂತಿಪತ್ರಿ ಎಂಬ ಊರಿನವರೆಗೆ ಹೋದರು.</verse>
				<verse number="32">ಮರುದಿನ ಪೌಲನೊಂದಿಗೆ ಮುಂದೆ ಹೋಗಲು ಕುದುರೆಸವಾರರನ್ನು ಬಿಟ್ಟು, ಸೈನಿಕರು ಅವರ ಪಾಳ್ಯಕ್ಕೆ ಹಿಂದಿರುಗಿದರು.</verse>
				<verse number="33">ಅವರು ಕೈಸರೈಯವನ್ನು ತಲುಪಿ ರಾಜ್ಯಪಾಲನಿಗೆ ಪತ್ರವನ್ನು ಕೊಟ್ಟು ಪೌಲನನ್ನು ಅವನಿಗೆ ಒಪ್ಪಿಸಿದರು.</verse>
				<verse number="34">ರಾಜ್ಯಪಾಲನು ಪತ್ರವನ್ನು ಓದಿ, ಪೌಲನು ಯಾವ ಪ್ರಾಂತದವನೆಂದು ಪ್ರಶ್ನಿಸಿ, ಅವನು ಕಿಲಿಕ್ಯದವನೆಂದು ತಿಳಿದುಕೊಂಡು,</verse>
				<verse number="35">“ನಿನ್ನ ಮೇಲೆ ಆರೋಪ ಹೊರಿಸಿದವರು ಇಲ್ಲಿಗೆ ಬಂದು ತಲುಪಿದ ತರುವಾಯ ನಿನ್ನ ವಿಚಾರಣೆ ಮಾಡುತ್ತೇನೆ,” ಎಂದು ಹೇಳಿ, ಪೌಲನನ್ನು ಹೆರೋದನ ಅರಮನೆಯಲ್ಲಿ ಕಾವಲಲ್ಲಿಡಬೇಕೆಂದು ಆಜ್ಞಾಪಿಸಿದನು.</verse>
			</chapter>
			<chapter number="24">
				<verse number="1">ಐದು ದಿನಗಳ ನಂತರ ಮಹಾಯಾಜಕ ಅನನೀಯನು ಕೆಲವು ಹಿರಿಯರೊಂದಿಗೆ ಕೈಸರೈಯಕ್ಕೆ ಬಂದನು. ತನ್ನೊಂದಿಗೆ ಟೆರ್ಟುಲಸ್ ಎಂಬ ವಕೀಲನನ್ನು ಕರೆದುಕೊಂಡು ಬಂದು, ರಾಜ್ಯಪಾಲನಿಗೆ ಪೌಲನ ವಿರೋಧವಾಗಿ ದೂರುಗಳನ್ನಿಟ್ಟರು.</verse>
				<verse number="2">ಪೌಲನನ್ನು ಒಳಗೆ ಕರೆದುಕೊಂಡು ಬಂದಾಗ, ಟೆರ್ಟುಲಸನು ಫೇಲಿಕ್ಸನ ಮುಂದೆ ತಪ್ಪು ಹೊರಿಸಲು ಪ್ರಾರಂಭಿಸಿ, “ಸನ್ಮಾನಿತ ಫೇಲಿಕ್ಸರೇ, ನಿಮ್ಮ ಮೂಲಕ ಬಹಳ ದಿನಗಳಿಂದ ಶಾಂತಿಯನ್ನು ಅನುಭವಿಸುತ್ತಿದ್ದೇವೆ. ನಿಮ್ಮ ಮುಂದಾಲೋಚನೆಯಿಂದ ದೇಶಗಳಿಗೆ ಅನೇಕ ಸುಧಾರಣೆಗಳನ್ನು ತಂದಿರುವಿರಿ.</verse>
				<verse number="3">ಎಲ್ಲಾ ಕಡೆಗಳಲ್ಲಿಯೂ ಎಲ್ಲಾ ವಿಧದಲ್ಲಿಯೂ ಬಹು ಕೃತಜ್ಞತೆಯಿಂದ ಇದನ್ನು ಸ್ವಾಗತಿಸುತ್ತೇವೆ.</verse>
				<verse number="4">ಆದರೆ ನಿಮಗೆ ಹೆಚ್ಚು ತೊಂದರೆಕೊಟ್ಟು ಬೇಸರಪಡಿಸದೇ ನಾನು ಸಂಕ್ಷೇಪವಾಗಿ ಹೇಳುವ ಮಾತುಗಳನ್ನು ಸಹನೆಯಿಂದ ಕೇಳಬೇಕೆಂದು ಬೇಡಿಕೊಳ್ಳುತ್ತೇನೆ.</verse>
				<verse number="5">“ಜಗತ್ತಿನಲ್ಲಿ ಇರುವ ಯೆಹೂದ್ಯರ ಮಧ್ಯದಲ್ಲಿ ದಂಗೆಯೆಬ್ಬಿಸಿ ಪೌಲನೆಂಬ ಈ ಮನುಷ್ಯನು ತೊಂದರೆ ಕೊಡುವವನಾಗಿದ್ದಾನೆಂತಲೂ ನಜರೇತಿನವರ ಪಂಗಡಕ್ಕೆ ಇವನು ನಾಯಕನೆಂದೂ ನಾವು ಕಂಡೆವು.</verse>
				<verse number="6">ಇವನು ದೇವಾಲಯವನ್ನು ಭ್ರಷ್ಟಮಾಡಲು ಪ್ರಯತ್ನಿಸಿದ್ದರಿಂದ ನಾವು ಇವನನ್ನು ಬಂಧಿಸಿದೆವು.</verse>
				<verse number="7">ಆದರೆ ಸಹಸ್ರಾಧಿಪತಿ ಲೂಸ್ಯನು ಮಧ್ಯೆಬಂದು ಬಲಾತ್ಕಾರದಿಂದ ಇವನನ್ನು ನಮ್ಮಿಂದ ಬಿಡಿಸಿಕೊಂಡು ಹೋದನು.</verse>
				<verse number="8">ನೀವೇ ಪೌಲನನ್ನು ವಿಚಾರಣೆ ಮಾಡುವುದರ ಮೂಲಕ ನಾವು ಇವನಿಗೆ ವಿರೋಧವಾಗಿ ತಂದಿರುವ ದೂರುಗಳೆಲ್ಲವೂ ಸತ್ಯವೆಂದು ನಿಮಗೇ ಗೊತ್ತಾಗುವುದು.”</verse>
				<verse number="9">ಆಗ ಈ ಸಂಗತಿಗಳು ಸತ್ಯವಾದವುಗಳೆಂದು ಯೆಹೂದ್ಯರು ಸಹ ಸೇರಿಕೊಂಡು ವಕೀಲನಿಗೆ ದೋಷಾರೋಪಣೆ ಮಾಡಿದರು.</verse>
				<verse number="10">ರಾಜ್ಯಪಾಲನು ಪೌಲನಿಗೆ ಮಾತನಾಡಬೇಕೆಂದು ಸನ್ನೆಮಾಡಿದಾಗ, ಪೌಲನು ಕೊಟ್ಟ ಉತ್ತರವಿದು: “ಅನೇಕ ವರ್ಷಗಳಿಂದ ತಾವು ಈ ದೇಶದ ಮೇಲೆ ನ್ಯಾಯಾಧೀಶರಾಗಿರುವುದನ್ನು ನಾನು ಬಲ್ಲೆ. ಆದ್ದರಿಂದ ನಾನು ಸಂತೋಷದಿಂದ ನನ್ನ ಪ್ರತಿವಾದವನ್ನು ತಮ್ಮ ಮುಂದಿಡುತ್ತೇನೆ.</verse>
				<verse number="11">ದೇವರ ಆರಾಧನೆ ಮಾಡಲು ಯೆರೂಸಲೇಮಿಗೆ ಹೋಗಿ ಇನ್ನೂ ಹನ್ನೆರಡು ದಿನಗಳು ಮಾತ್ರವಾಯಿತು. ಇದನ್ನು ತಾವು ವಿಚಾರಿಸಿ ತಿಳಿದುಕೊಳ್ಳಬಹುದು.</verse>
				<verse number="12">ದೇವಾಲಯದಲ್ಲಾಗಲಿ, ಸಭಾಮಂದಿರದಲ್ಲಾಗಲಿ, ಪಟ್ಟಣದ ಯಾವುದೇ ಸ್ಥಳದಲ್ಲಾಗಲಿ ನಾನು ವಾಗ್ವಾದ ಮಾಡುತ್ತಿದ್ದುದ್ದನ್ನು ಅಥವಾ ಜನರ ಗುಂಪನ್ನು ಕೂಡಿಸುವುದನ್ನು ಇವರು ಕಂಡಿಲ್ಲ.</verse>
				<verse number="13">ಈಗ ಅವರು ನನ್ನ ಮೇಲೆ ಹೊರಿಸುತ್ತಿರುವ ಆಪಾದನೆಗಳನ್ನು ನಿಮ್ಮ ಮುಂದೆ ಅವರು ರುಜುಮಾಡಿ ತೋರಿಸಲಾರರು.</verse>
				<verse number="14">ಆದರೂ ಅವರು ಒಂದು ಪಂಗಡ ಎಂದು ಕರೆಯುವ ಮಾರ್ಗದ ಅನುಯಾಯಿಯಾಗಿ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ ಎಂಬುದನ್ನು ಒಪ್ಪಿಕೊಳ್ಳುತ್ತೇನೆ. ಮೋಶೆಯ ನಿಯಮ ಒಪ್ಪಿಕೊಳ್ಳುವಂಥದೆಲ್ಲವನ್ನೂ ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವುದೆಲ್ಲವನ್ನೂ ನಾನು ನಂಬುತ್ತೇನೆ.</verse>
				<verse number="15">ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಿದೆಯೆಂದು ಈ ಜನರು ಎದುರುನೋಡುವಂತೆಯೇ ದೇವರಲ್ಲಿ ನನಗೂ ನಿರೀಕ್ಷೆಯಿದೆ.</verse>
				<verse number="16">ಆದ್ದರಿಂದ ದೇವರ ಮುಂದೆಯೂ ಜನರ ಮುಂದೆಯೂ ನನ್ನ ಮನಸ್ಸಾಕ್ಷಿಯನ್ನು ಯಾವಾಗಲೂ ಶುದ್ಧವಾಗಿಟ್ಟುಕೊಂಡಿರಲು ಪರಿಶ್ರಮಿಸುತ್ತಿದ್ದೇನೆ.</verse>
				<verse number="17">“ಅನೇಕ ವರ್ಷಗಳ ನಂತರ ದಾನಧರ್ಮಗಳನ್ನೂ ಕಾಣಿಕೆಗಳನ್ನೂ ನನ್ನ ಸ್ವದೇಶದವರಿಗೆ ಕೊಡಲು ಬಂದೆನು.</verse>
				<verse number="18">ನಾನು ಇದನ್ನು ಮಾಡುತ್ತಾ ದೇವಾಲಯದಲ್ಲಿದ್ದಾಗ ನಾನು ಶುದ್ಧಾಚಾರ ಮಾಡುತ್ತಿರುವುದನ್ನು ಇವರು ಕಂಡರು. ನನ್ನೊಂದಿಗೆ ಜನರ ಗುಂಪು ಇರಲಿಲ್ಲ. ನಾನು ಗೊಂದಲವನ್ನೆಬ್ಬಿಸಲಿಲ್ಲ.</verse>
				<verse number="19">ಆದರೆ ಏಷ್ಯಾ ಪ್ರಾಂತದ ಕೆಲವು ಜನ ಯೆಹೂದ್ಯರು ಅಲ್ಲಿಗೆ ಬಂದಿದ್ದರು. ಅವರಿಗೆ ನನ್ನ ಮೇಲೆ ಏನಾದರೂ ವಿರೋಧವಿದ್ದರೆ, ಅವರು ನಿಮ್ಮ ಸನ್ನಿಧಿಯಲ್ಲಿ ಈಗ ಬಂದು ನನ್ನ ಮೇಲೆ ಅಪರಾಧ ಹೊರಿಸಲಿ.</verse>
				<verse number="20">ಇಲ್ಲವೆ ಇಲ್ಲಿಗೆ ಈಗ ಬಂದವರು ನಾನು ನ್ಯಾಯಸಭೆಯ ಮುಂದೆ ನಿಂತಾಗ ನನ್ನಲ್ಲಿ ಯಾವ ಅಪರಾಧವನ್ನು ಕಂಡರು ಎಂಬುದನ್ನು ಹೇಳಲಿ.</verse>
				<verse number="21">‘ಇಂದು ನಾನು ನಿಮ್ಮ ಮುಂದೆ ನ್ಯಾಯವಿಚಾರಣೆಗೆ ನಿಂತಿರುವುದು ಸತ್ತವರ ಪುನರುತ್ಥಾನಕ್ಕೆ ಸಂಬಂಧಿಸಿದ್ದು,’ ಎಂದು ಅವರ ಮಧ್ಯದಲ್ಲಿ ನಿಂತು ಕೂಗಿದ್ದನ್ನು ಬಿಟ್ಟರೆ ಬೇರೆ ಏನನ್ನೂ ಇವರು ಹೇಳಲಾರರು,” ಎಂದನು.</verse>
				<verse number="22">ಈ ಮಾರ್ಗದ ವಿಷಯದ ಬಗ್ಗೆ ಬಹು ಸೂಕ್ಷ್ಮವಾಗಿ ತಿಳಿದುಕೊಂಡಿದ್ದ ಫೇಲಿಕ್ಸನು ವಿಚಾರಣೆಯನ್ನು ಮುಂದಕ್ಕೆ ಹಾಕಿದನು. ಅನಂತರ ಅವನು, “ಸಹಸ್ರಾಧಿಪತಿ ಲೂಸ್ಯನು ಬಂದ ಮೇಲೆ ನಿನ್ನ ಈ ವ್ಯಾಜ್ಯ ತೀರ್ಮಾನಿಸುತ್ತೇನೆ,” ಎಂದು ಹೇಳಿದನು.</verse>
				<verse number="23">ಪೌಲನನ್ನು ಕಾವಲಿನಲ್ಲಿಡಬೇಕೆಂತಲೂ ಅವನ ಸ್ನೇಹಿತರು ಅವನನ್ನು ಸಂದರ್ಶಿಸಲು ಅಡ್ಡಿಮಾಡಬಾರದೆಂತಲೂ ಶತಾಧಿಪತಿಗೆ ಆಜ್ಞೆಕೊಟ್ಟನು.</verse>
				<verse number="24">ಕೆಲವು ದಿನಗಳಾದ ತರುವಾಯ ಫೇಲಿಕ್ಸನು ಯೆಹೂದ್ಯಳಾದ ತನ್ನ ಪತ್ನಿ ದ್ರೂಸಿಲ್ಲಳೊಂದಿಗೆ ಬಂದನು. ಪೌಲನನ್ನು ಕರೆಕಳುಹಿಸಿ ಅವನು ಕ್ರಿಸ್ತ ಯೇಸುವಿನಲ್ಲಿ ನಂಬುವ ವಿಷಯವಾಗಿ ಮಾತನಾಡುವುದನ್ನು ಕೇಳಿದನು.</verse>
				<verse number="25">ನೀತಿ, ದಮೆ, ಬರಲಿಕ್ಕಿರುವ ನ್ಯಾಯವಿಚಾರಣೆಯ ಬಗ್ಗೆ ಪೌಲನು ವಿವರಿಸಿದಾಗ, ಫೇಲಿಕ್ಸ್ ಹೆದರಿಕೊಂಡವನಾಗಿ, “ಈಗ ಇಷ್ಟೇ ಸಾಕು! ಸದ್ಯಕ್ಕೆ ನೀನು ಹೋಗಬಹುದು. ಅನಂತರ ನಾನು ಸಮಯ ಸಿಕ್ಕಿದಾಗ ನಿನ್ನನ್ನು ಪುನಃ ಕರೆಯಿಸುತ್ತೇನೆ,” ಎಂದನು.</verse>
				<verse number="26">ಅದೇ ಸಮಯದಲ್ಲಿ ಅವನು ಪೌಲನು ತನಗೇನಾದರು ಹಣ ಕೊಡುವನೋ ಎಂಬುದಾಗಿಯೂ ನಿರೀಕ್ಷಿಸಿ, ಆಗಾಗ್ಗೆ ಅವನನ್ನು ಕರೆಯಿಸಿ ಅವನೊಂದಿಗೆ ಮಾತನಾಡುತ್ತಿದ್ದನು.</verse>
				<verse number="27">ಎರಡು ವರ್ಷಗಳು ಕಳೆದವು. ಫೇಲಿಕ್ಸನ ಬದಲಾಗಿ ಪೊರ್ಸಿಯ ಫೆಸ್ತನು ಎಂಬುವನು ರಾಜ್ಯಪಾಲನಾಗಿ ಬಂದನು. ಫೇಲಿಕ್ಸನು ಯೆಹೂದ್ಯರಿಗೆ ಮೆಚ್ಚುಗೆಯನ್ನು ಗಳಿಸಬಯಸಿದವನಾಗಿ ಪೌಲನನ್ನು ಸೆರೆಮನೆಯಲ್ಲಿಯೇ ಬಿಟ್ಟುಹೋದನು.</verse>
			</chapter>
			<chapter number="25">
				<verse number="1">ಫೆಸ್ತನು ಅಧಿಕಾರವಹಿಸಿಕೊಂಡು ಮೂರು ದಿನಗಳ ನಂತರ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.</verse>
				<verse number="2">ಅಲ್ಲಿ ಮುಖ್ಯಯಾಜಕರು ಹಾಗೂ ಯೆಹೂದ್ಯ ನಾಯಕರು ಅವರ ಮುಂದೆ ಬಂದು ಪೌಲನಿಗೆ ವಿರೋಧವಾಗಿ ಆರೋಪ ಮಾಡಿದರು.</verse>
				<verse number="3">ತಮಗೆ ದಯೆತೋರಿ ಪೌಲನನ್ನು ಕೂಡಲೇ ಯೆರೂಸಲೇಮಿಗೆ ವರ್ಗಾಯಿಸಬೇಕೆಂದು ಫೆಸ್ತನನ್ನು ಬೇಡಿಕೊಂಡರು. ಏಕೆಂದರೆ ಪೌಲನು ಹಿಂದಿರುಗುವಾಗ ಮಾರ್ಗದಲ್ಲೇ ಅವನನ್ನು ಕೊಲ್ಲಬೇಕೆಂದು ಹೊಂಚುಹಾಕಿಕೊಂಡಿದ್ದರು.</verse>
				<verse number="4">ಆದ್ದರಿಂದ ಫೆಸ್ತನು ಉತ್ತರವಾಗಿ, “ಪೌಲನು ಕೈಸರೈಯದಲ್ಲಿ ಕಾವಲೊಳಗಿದ್ದಾನೆ. ನಾನೇ ಅಲ್ಲಿಗೆ ಬೇಗ ಹೊಗಬೇಕೆಂದಿದ್ದೇನೆ.</verse>
				<verse number="5">ನಿಮ್ಮಲ್ಲಿಯ ಕೆಲವು ನಾಯಕರು ನನ್ನೊಂದಿಗೆ ಅಲ್ಲಿಗೆ ಬರಲಿ. ಅವನೇನಾದರೂ ತಪ್ಪು ಮಾಡಿದ್ದರೆ ಅವನ ಮೇಲಿನ ದೂರುಗಳನ್ನು ಆಪಾದಿಸಲಿ,” ಎಂದನು.</verse>
				<verse number="6">ಎಂಟು ಹತ್ತು ದಿನಗಳನ್ನು ಅವರೊಂದಿಗೆ ಕಳೆದ ತರುವಾಯ ಅವನು ಕೈಸರೈಯಕ್ಕೆ ಹೋದನು. ಮರುದಿನ ನ್ಯಾಯಸ್ಥಾನದಲ್ಲಿ ಕುಳಿತುಕೊಂಡು ತನ್ನ ಮುಂದೆ ಪೌಲನನ್ನು ಕರೆತರಬೇಕೆಂದು ಆಜ್ಞಾಪಿಸಿದನು.</verse>
				<verse number="7">ಪೌಲನು ಅಲ್ಲಿಗೆ ಬಂದಾಗ, ಯೆರೂಸಲೇಮಿನಿಂದ ಬಂದ ಯೆಹೂದ್ಯರು ಅವನ ಸುತ್ತಲೂ ಎದ್ದು ನಿಂತು, ಅನೇಕ ತೀವ್ರ ಆಪಾದನೆಗಳನ್ನು ಅವನ ವಿರುದ್ಧ ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಗೆ ಸಾಧ್ಯವಾಗಲಿಲ್ಲ.</verse>
				<verse number="8">ಆಗ ಪೌಲನು ತನ್ನ ಪ್ರತಿವಾದವನ್ನು ಮುಂದಿಟ್ಟು: “ನಾನು ಯೆಹೂದ್ಯರ ನಿಯಮಕ್ಕೆ ವಿರೋಧವಾಗಲಿ, ದೇವಾಲಯಕ್ಕೆ ವಿರೋಧವಾಗಲಿ, ಕೈಸರನ ವಿರೋಧವಾಗಲಿ ಯಾವ ತಪ್ಪನ್ನೂ ಮಾಡಿಲ್ಲ,” ಎಂದನು.</verse>
				<verse number="9">ಫೆಸ್ತನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಲು ಬಯಸಿ ಪೌಲನಿಗೆ, “ನೀನು ಯೆರೂಸಲೇಮಿಗೆ ಹೋಗಿ, ಅಲ್ಲಿ ನನ್ನೆದುರಿನಲ್ಲಿ ಈ ದೂರುಗಳ ನ್ಯಾಯವಿಚಾರಣೆಗಾಗಿ ಒಪ್ಪಿಕೊಳ್ಳುವಿಯೋ?” ಎಂದು ಕೇಳಿದನು.</verse>
				<verse number="10">ಅದಕ್ಕೆ ಪೌಲನು, “ಈಗ ನಾನು ಕೈಸರನ ನ್ಯಾಯಾಲಯದ ಎದುರಿನಲ್ಲಿ ನಿಂತುಕೊಂಡಿದ್ದೇನೆ. ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ನೀವೇ ಚೆನ್ನಾಗಿ ತಿಳಿದುಕೊಂಡಿರುವಂತೆ ನಾನು ಯೆಹೂದ್ಯರಿಗೆ ವಿರೋಧವಾಗಿ ಯಾವ ತಪ್ಪನ್ನೂ ಮಾಡಿಲ್ಲ.</verse>
				<verse number="11">ಆದರೂ ಮರಣಶಿಕ್ಷೆಗೆ ಯೋಗ್ಯವಾದದ್ದೇನಾದರೂ ಮಾಡಿದ ಅಪರಾಧಿ ನಾನಾಗಿದ್ದರೆ, ಸಾಯಲಿಕ್ಕೂ ನಾನು ಹಿಂಜರಿಯುವುದಿಲ್ಲ. ಆದರೆ ಯೆಹೂದ್ಯರು ನನ್ನ ವಿರೋಧವಾಗಿ ತಂದಿರುವ ಆಪಾದನೆಗಳು ಸುಳ್ಳಾದವುಗಳಾದದ್ದರಿಂದ, ನನ್ನನ್ನು ಅವರಿಗೆ ಒಪ್ಪಿಸಲು ಯಾರಿಗೂ ಅಧಿಕಾರವಿಲ್ಲ. ನಾನು ನೇರವಾಗಿ ಕೈಸರನಿಗೇ ಮನವಿ ಮಾಡಿಕೊಳ್ಳುತ್ತೇನೆ,” ಎಂದು ಉತ್ತರಕೊಟ್ಟನು.</verse>
				<verse number="12">ಆಗ ಫೆಸ್ತನು ತನ್ನ ನ್ಯಾಯಸಭೆಯೊಂದಿಗೆ ಸಮಾಲೋಚನೆ ಮಾಡಿ, “ನೀನು ಕೈಸರನಿಗೆ ಮನವಿ ಮಾಡಿಕೊಂಡಿರುವೆ, ಕೈಸರನ ಬಳಿಗೇ ಹೋಗು!” ಎಂದು ಉತ್ತರಿಸಿದನು.</verse>
				<verse number="13">ಕೆಲವು ದಿನಗಳ ನಂತರ ಫೆಸ್ತನನ್ನು ಅಭಿನಂದಿಸಲು ರಾಜ ಅಗ್ರಿಪ್ಪನು ಬೆರ್ನಿಕೆಯಳೊಂದಿಗೆ ಕೈಸರೈಯಕ್ಕೆ ಬಂದನು.</verse>
				<verse number="14">ಅವರು ಅಲ್ಲಿ ಅನೇಕ ದಿನಗಳನ್ನು ಕಳೆಯುತ್ತಿದ್ದಾಗ, ಫೆಸ್ತನು ಪೌಲನ ವಿಷಯವನ್ನು ರಾಜನೊಂದಿಗೆ ಚರ್ಚಿಸಿ, “ಕೈದಿಯಾಗಿ ಫೇಲಿಕ್ಸನು ಬಿಟ್ಟುಹೋದ ಒಬ್ಬ ಮನುಷ್ಯನಿದ್ದಾನೆ.</verse>
				<verse number="15">ನಾನು ಯೆರೂಸಲೇಮಿಗೆ ಹೋದಾಗ ಮುಖ್ಯಯಾಜಕರೂ ಹಾಗೂ ಯೆಹೂದ್ಯರ ಹಿರಿಯರೂ ಅವನ ಮೇಲೆ ಆಪಾದನೆಗಳನ್ನು ತಂದು ಅವನಿಗೆ ವಿರೋಧವಾಗಿ ದಂಡನೆ ವಿಧಿಸಬೇಕೆಂದು ಕೇಳಿಕೊಂಡರು.</verse>
				<verse number="16">“ಆಪಾದಿತನು ಆಪಾದನೆ ಹೊರಿಸುವವರ ಮುಖಾಮುಖಿಯಾಗಿ ನಿಂತು ತನ್ನ ಮೇಲೆ ಹೊರಿಸಲಾದ ಆಪಾದನೆಗಳಿಗೆ ಪ್ರತಿವಾದ ಮಾಡಿಕೊಳ್ಳುವ ಮೊದಲು ಯಾವ ಮನುಷ್ಯನನ್ನೂ ಒಪ್ಪಿಸಿಕೊಡುವುದು ರೋಮ್ ಪದ್ಧತಿಯಲ್ಲ ಎಂದು ನಾನು ಅವರಿಗೆ ಹೇಳಿದೆನು.</verse>
				<verse number="17">ಅವರು ನನ್ನೊಂದಿಗೆ ಇಲ್ಲಿಗೆ ಬಂದದ್ದರಿಂದ ನ್ಯಾಯವಿಚಾರಣೆಯನ್ನು ತಡಮಾಡದೆ ಪ್ರಾರಂಭಿಸಿದೆ. ಮರುದಿನ ನ್ಯಾಯವಿಚಾರಣೆ ನಡೆಸಿ ಪೌಲನೆಂಬ ಆ ಮನುಷ್ಯನನ್ನು ತರಬೇಕೆಂದು ಆಜ್ಞಾಪಿಸಿದೆ.</verse>
				<verse number="18">ಅವನ ಮೇಲೆ ಆಪಾದನೆ ಹೊರಿಸುವವರು ಮಾತನಾಡಲು ಎದ್ದು ನಿಂತಾಗ, ನಾನು ಭಾವಿಸಿದ ಯಾವುದೇ ಅಪರಾಧವನ್ನು ಅವರು ಅವನ ಮೇಲೆ ಹೊರಿಸಲಿಲ್ಲ.</verse>
				<verse number="19">ಆದರೆ ಅವರಿಗೆ ತಮ್ಮ ಸಂಪ್ರದಾಯದ ಬಗ್ಗೆಯೂ ಸತ್ತು ಹೋಗಿದ್ದ ಯೇಸು ಎಂಬ ಮನುಷ್ಯನು ಜೀವಿಸುತ್ತಿದ್ದಾನೆಂದೂ ಪೌಲ ಹೇಳುವಂಥದ್ದರ ಬಗ್ಗೆ ವಾದವಿವಾದವಿತ್ತು.</verse>
				<verse number="20">ನಾನು ಅಂಥಾ ವಿಚಾರಗಳ ಬಗ್ಗೆ ಅವನು ಯೆರೂಸಲೇಮಿಗೆ ಹೋಗಿ ಈ ಆಪಾದನೆಗಳ ಬಗ್ಗೆ ವಿಚಾರಣೆಗೆ ಒಳಗಾಗಲು ಮನಸ್ಸಿದೆಯೋ ಎಂದು ಅವನನ್ನು ಕೇಳಿದೆನು.</verse>
				<verse number="21">ಆದರೆ ಪೌಲನು ತನ್ನ ಬೇಡಿಕೆಯನ್ನು ನೇರವಾಗಿ ಕೈಸರನ ಬಳಿಗೆ ಕಳುಹಿಸುವವರೆಗೆ ಅವನನ್ನು ಕಾವಲಲ್ಲಿಡಬೇಕೆಂದು ಆಜ್ಞಾಪಿಸಿದ್ದೇನೆ,” ಎಂದು ಫೆಸ್ತನು ಹೇಳಿದನು.</verse>
				<verse number="22">ಆಗ ಅಗ್ರಿಪ್ಪ ರಾಜನು, “ಈ ಮನುಷ್ಯನು ಹೇಳುವುದನ್ನು ನಾನೂ ಕೇಳಬೇಕೆಂದಿದ್ದೇನೆ,” ಎಂದು ಫೆಸ್ತನಿಗೆ ಹೇಳಿದನು. “ನಾಳೆಯೇ ಪೌಲನ ಬೇಡಿಕೆಯನ್ನು ಕೇಳುವಿರಿ,” ಎಂದು ಫೆಸ್ತನು ಉತ್ತರಕೊಟ್ಟನು.</verse>
				<verse number="23">ಮರುದಿನ ಅಗ್ರಿಪ್ಪನು ಹಾಗೂ ಬೆರ್ನಿಕೆಯು ಮಹಾ ವೈಭವದಿಂದ ಸೈನ್ಯಾಧಿಕಾರಿಗಳೊಂದಿಗೂ ಪಟ್ಟಣದ ಗಣ್ಯವ್ಯಕ್ತಿಗಳೊಂದಿಗೂ ಆಸ್ಥಾನವನ್ನು ಪ್ರವೇಶಿಸಿದರು. ಫೆಸ್ತನ ಆಜ್ಞೆಯಂತೆ ಪೌಲನನ್ನು ಕರೆದುಕೊಂಡು ಬಂದರು.</verse>
				<verse number="24">ಆಗ ಫೆಸ್ತನು, “ಅಗ್ರಿಪ್ಪ ರಾಜನೇ, ನಮ್ಮ ಸಂಗಡ ಇಲ್ಲಿ ಸೇರಿ ಬಂದಿರುವವರೇ, ನೀವು ಕಾಣುತ್ತಿರುವ ಈ ಮನುಷ್ಯನು ಜೀವದಿಂದ ಉಳಿಯಬಾರದೆಂದು ಯೆರೂಸಲೇಮಿನಲ್ಲಿಯೂ ಇಲ್ಲಿಯೂ ಯೆಹೂದ್ಯರೆಲ್ಲರೂ ನನ್ನನ್ನು ಬೇಡಿಕೊಂಡಿದ್ದಾರೆ.</verse>
				<verse number="25">ಇವನು ಮರಣದಂಡನೆಗೆ ಯೋಗ್ಯವಾದ ಯಾವುದೇ ಅಪರಾಧ ಮಾಡಿಲ್ಲ ಎಂದು ನಾನು ಕಂಡುಕೊಂಡಿದ್ದೇನೆ. ಆದರೆ ಇವನು ನೇರವಾಗಿ ಚಕ್ರವರ್ತಿಗೇ ತನ್ನ ಬೇಡಿಕೆ ಸಲ್ಲಿಸಿದ್ದರಿಂದ ಇವನನ್ನು ರೋಮ್ ನಗರಕ್ಕೆ ಕಳುಹಿಸಲು ತೀರ್ಮಾನಿಸಿದ್ದೇನೆ.</verse>
				<verse number="26">ಆದರೂ ಇವನ ಬಗ್ಗೆ ಖಚಿತವಾಗಿ ತಮಗೆ ಬರೆಯಲು ನನಗೇನು ಇಲ್ಲದಿರುವುದರಿಂದ, ಅಗ್ರಿಪ್ಪ ರಾಜನೇ, ಇವನನ್ನು ತಮ್ಮ ಮುಂದೆ ತಂದಿದ್ದೇನೆ. ಹೀಗೆ ಈ ವಿಚಾರಣೆಯ ಮೂಲಕ ಬರೆಯಲು ನನಗೇನಾದರೂ ಸಿಕ್ಕಬಹುದು.</verse>
				<verse number="27">ಏಕೆಂದರೆ ನಿಶ್ಚಿತವಾದ ಅಪರಾಧಗಳನ್ನು ಸೂಚಿಸದೆ ಒಬ್ಬ ಸೆರೆಯಾಳನ್ನು ಕಳುಹಿಸುವುದು ಸರಿಯಲ್ಲ ಎಂದು ನನಗನಿಸುತ್ತದೆ,” ಎಂದನು.</verse>
			</chapter>
			<chapter number="26">
				<verse number="1">ಆಗ ಅಗ್ರಿಪ್ಪನು, “ನಿನ್ನ ಪರವಾಗಿ ಮಾತನಾಡಲು ನಿನಗೆ ಅಪ್ಪಣೆಯಿದೆ,” ಎಂದು ಪೌಲನಿಗೆ ಹೇಳಿದನು. ಆಗ ಪೌಲನು ಕೈಯೆತ್ತಿ ಹೀಗೆ ಪ್ರತಿವಾದಿಸತೊಡಗಿದನು:</verse>
				<verse number="2">“ಅಗ್ರಿಪ್ಪ ರಾಜರೇ, ಯೆಹೂದ್ಯರು ಮಾಡಿದ ಎಲ್ಲಾ ಆಪಾದನೆಗಳಿಗೆ ವಿರುದ್ಧವಾಗಿ ಇಂದು ನನ್ನ ಪ್ರತಿವಾದ ಮಾಡಲು ತಮ್ಮ ಎದುರಿನಲ್ಲಿರುವುದು ನನ್ನ ಭಾಗ್ಯವೆಂದೇ ತಿಳಿಯುತ್ತೇನೆ.</verse>
				<verse number="3">ಯೆಹೂದ್ಯರ ಎಲ್ಲಾ ಆಚಾರ ವಿಚಾರಗಳನ್ನು, ವಾದವಿವಾದಗಳನ್ನು ತಾವು ಚೆನ್ನಾಗಿ ತಿಳಿದಿದ್ದೀರಿ. ಆದ್ದರಿಂದ, ತಾವು ತಾಳ್ಮೆಯಿಂದ ಆಲಿಸಬೇಕೆಂದು ಕೇಳಿಕೊಳ್ಳುತ್ತೇನೆ.</verse>
				<verse number="4">“ನಾನು ಬಾಲಕನಾಗಿದ್ದಾಗಿನಿಂದ, ನನ್ನ ಪಟ್ಟಣದಲ್ಲಿಯೂ ಅನಂತರ ಯೆರೂಸಲೇಮಿನಲ್ಲಿಯೂ ನಾನು ಜೀವನ ಮಾಡಿದ ರೀತಿಯನ್ನು ಯೆಹೂದ್ಯರೆಲ್ಲರೂ ಬಲ್ಲವರಾಗಿದ್ದಾರೆ.</verse>
				<verse number="5">ಅವರು ನಮ್ಮ ವಿಶ್ವಾಸದ ಅತಿ ಕಟ್ಟುನಿಟ್ಟಾದ ಪಂಗಡಕ್ಕೆ ತಕ್ಕಂತೆ ನಾನು ಫರಿಸಾಯನಾಗಿ ಜೀವಿಸಿದೆನೆಂಬುದಾಗಿ ತಿಳಿದವರಾಗಿದ್ದಾರೆ. ಸಾಕ್ಷಿ ಹೇಳುವುದಕ್ಕೆ, ಅವರಿಗೆ ಮನಸ್ಸಿದ್ದರೆ ಹೇಳಬಹುದು.</verse>
				<verse number="6">ಈಗ ನಾನು ನನ್ನ ಪಿತೃಗಳಿಗೆ ದೇವರು ವಾಗ್ದಾನ ಮಾಡಿದ್ದರಲ್ಲಿ ನಿರೀಕ್ಷೆಯಿಟ್ಟಿದ್ದರಿಂದ ಇಂದು ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ.</verse>
				<verse number="7">ರಾಜರೇ, ನಮ್ಮ ಹನ್ನೆರಡು ಗೋತ್ರಗಳವರು ಅತ್ಯಾಸಕ್ತಿಯಿಂದ ಹಗಲಿರುಳು ದೇವರ ಸೇವೆಮಾಡುತ್ತಾ, ಆ ವಾಗ್ದಾನವು ನೆರವೇರುವುದೆಂದು ನಿರೀಕ್ಷಿಸುತ್ತಾ ಇದ್ದಾರೆ. ರಾಜರೇ, ಈ ನಿರೀಕ್ಷೆಯ ನಿಮಿತ್ತವಾಗಿಯೇ ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆ ಮಾಡುತ್ತಿದ್ದಾರೆ.</verse>
				<verse number="8">ಸತ್ತವರನ್ನು ದೇವರು ಜೀವಂತವಾಗಿ ಎಬ್ಬಿಸುತ್ತಾರೆಂಬುದನ್ನು ನಂಬಲು ಅಸಾಧ್ಯವೆಂದು ನೀವು ಪರಿಗಣಿಸುವುದು ಏಕೆ?</verse>
				<verse number="9">“ನಜರೇತಿನ ಯೇಸುವಿನ ಹೆಸರನ್ನು ವಿರೋಧಿಸಲು ಅನೇಕ ಸಂಗತಿಗಳನ್ನು ಮಾಡಬೇಕೆಂದು ನಾನು ಸಹ ಒಮ್ಮೆ ಯೋಚಿಸಿಕೊಂಡಿದ್ದೆನು.</verse>
				<verse number="10">ಹಾಗೆಯೇ ನಾನು ಯೆರೂಸಲೇಮಿನಲ್ಲಿ ಮಾಡಿದೆನು. ಮುಖ್ಯಯಾಜಕರ ಅಧಿಕಾರ ಪಡೆದು ಅನೇಕ ಭಕ್ತರನ್ನು ಸೆರೆಮನೆಗೆ ಹಾಕಿಸಿದೆನು. ಅವರನ್ನು ಮರಣದಂಡನೆಗೆ ಒಪ್ಪಿಸುವಾಗ, ಅವರಿಗೆ ವಿರುದ್ಧವಾಗಿ ಮತ ಚಲಾಯಿಸಿದೆನು.</verse>
				<verse number="11">ಅನೇಕ ಸಲ ಅವರನ್ನು ದಂಡಿಸಲು ನಾನು ಒಂದು ಸಭಾಮಂದಿರದಿಂದ ಇನ್ನೊಂದು ಸಭಾಮಂದಿರಕ್ಕೆ ಹೋಗಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆ. ಇದಲ್ಲದೆ ಅವರ ಮೇಲೆ ಬಹು ಕೋಪಗೊಂಡವನಾಗಿ ನಾನು ಅವರನ್ನು ಹಿಂಸಿಸಲು ವಿದೇಶಿ ಪಟ್ಟಣಗಳಿಗೂ ಹೋದೆನು.</verse>
				<verse number="12">“ಹೀಗೆ ನಾನು ಮುಖ್ಯಯಾಜಕರ ಅಧಿಕಾರ, ಅಪ್ಪಣೆಗಳೊಂದಿಗೆ ದಮಸ್ಕಕ್ಕೆ ಪ್ರಯಾಣ ಹೋಗುತ್ತಿದ್ದೆನು.</verse>
				<verse number="13">ಆಗ ರಾಜರೇ, ಮಧ್ಯಾಹ್ನದ ಸಮಯದಲ್ಲಿ, ಮಾರ್ಗ ಮಧ್ಯದಲ್ಲಿ ನಾನು, ಆಕಾಶದಿಂದ ಸೂರ್ಯನ ಪ್ರಕಾಶಕ್ಕಿಂತಲೂ ಹೆಚ್ಚಾಗಿ ಹೊಳೆಯುವ ಒಂದು ಬೆಳಕನ್ನು ಕಂಡೆನು. ಅದು ನನ್ನ ಸುತ್ತಲೂ ನನ್ನ ಸಂಗಡಿಗರ ಸುತ್ತಲೂ ಪ್ರಕಾಶಿಸಿತು.</verse>
				<verse number="14">ನಾವೆಲ್ಲರೂ ನೆಲದ ಮೇಲೆ ಬಿದ್ದೆವು. ಆಗ, ‘ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿ,’ ಎಂದು ಹೀಬ್ರೂ ಭಾಷೆಯಲ್ಲಿ ಹೇಳುವ ವಾಣಿಯನ್ನು ಕೇಳಿದೆನು.</verse>
				<verse number="15">“ಆಗ ನಾನು, ‘ಸ್ವಾಮಿ, ತಾವು ಯಾರು?’ ಎಂದು ಕೇಳಲು, “ಕರ್ತದೇವರು, ‘ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು.</verse>
				<verse number="16">ನೀನು ಎದ್ದು ನಿಂತುಕೋ, ನೀನು ಕಂಡಿದ್ದವುಗಳಿಗಾಗಿಯೂ ನಾನು ನಿನಗೆ ತೋರಿಸುವಂಥವುಗಳಿಗಾಗಿಯೂ ನಿನ್ನನ್ನು ಸೇವಕನನ್ನಾಗಿಯೂ ಸಾಕ್ಷಿಯನ್ನಾಗಿಯೂ ನೇಮಿಸಲು ನಾನು ನಿನಗೆ ಕಾಣಿಸಿಕೊಂಡಿದ್ದೇನೆ.</verse>
				<verse number="17">ನಾನು ನಿನ್ನ ಸ್ವಂತ ಜನರಿಂದಲೂ ಯೆಹೂದ್ಯರಲ್ಲದವರಿಂದಲೂ ನಿನ್ನನ್ನು ಕಾಪಾಡುವೆನು.</verse>
				<verse number="18">ನೀನು ಅವರ ಕಣ್ಣುಗಳನ್ನು ತೆರೆದು, ಅವರನ್ನು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಸಿ ಪಾಪಕ್ಷಮಾಪಣೆಯನ್ನು ಪಡೆಯುವಂತೆ ಮಾಡಿ, ನನ್ನಲ್ಲಿ ವಿಶ್ವಾಸವಿದ್ದು ಶುದ್ಧೀಕರಣ ಹೊಂದಿದವರ ಮಧ್ಯದಲ್ಲಿ ಹಕ್ಕುಬಾಧ್ಯತೆಯನ್ನು ಪಡೆಯುವಂತೆ ಮಾಡಬೇಕೆಂದು ನಿನ್ನನ್ನು ಕಳುಹಿಸುತ್ತಿದ್ದೇನೆ,’ ಎಂದರು.</verse>
				<verse number="19">“ಆದ್ದರಿಂದ ಅಗ್ರಿಪ್ಪ ರಾಜರೇ, ಆ ಪರಲೋಕದ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.</verse>
				<verse number="20">ಆದರೆ ಮೊದಲು ದಮಸ್ಕದಲ್ಲಿದ್ದವರಿಗೂ ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಗಳಲ್ಲಿ ಇದ್ದವರಿಗೂ ಯೆಹೂದ್ಯರಲ್ಲದವರಿಗೂ ನಾನು ಬೋಧಿಸಿದೆನು. ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು, ಪಶ್ಚಾತ್ತಾಪಕ್ಕೆ ಯೋಗ್ಯ ಕೃತ್ಯಗಳನ್ನು ನಡೆಸಬೇಕೆಂದು ನಾನು ಘೋಷಿಸಿದೆನು.</verse>
				<verse number="21">ಈ ಕಾರಣದಿಂದಲೇ ಯೆಹೂದ್ಯರು ನನ್ನನ್ನು ದೇವಾಲಯದಲ್ಲಿ ಬಂಧಿಸಿ ಕೊಲ್ಲಲು ಪ್ರಯತ್ನಿಸಿದರು.</verse>
				<verse number="22">ಆದರೆ ನಾನು ಇಂದಿನವರೆಗೂ ದೇವರಿಂದ ಸಹಾಯವನ್ನು ಪಡೆದಿರುತ್ತೇನೆ. ಹೀಗೆ ನಾನು ಇಲ್ಲಿ ನಿಂತುಕೊಂಡು ಚಿಕ್ಕವರಿಗೂ ದೊಡ್ಡವರಿಗೂ ಸಾಕ್ಷಿ ಕೊಡುತ್ತಿದ್ದೇನೆ. ಪ್ರವಾದಿಗಳೂ ಮೋಶೆಯೂ ಮುಂದೆ ಏನು ಸಂಭವಿಸುತ್ತದೆಯೆಂದು ಹೇಳಿದ್ದಕ್ಕಿಂತ ಹೆಚ್ಚಾಗಿ ನಾನು ಏನನ್ನೂ ಹೇಳಲಿಲ್ಲ.</verse>
				<verse number="23">ಕ್ರಿಸ್ತ ಯೇಸು ಶ್ರಮೆಹೊಂದಿ, ಸತ್ತವರೊಳಗಿಂದ ಜೀವಂತರಾಗಿ ಮೊದಲು ಎದ್ದು ತಮ್ಮ ಜನರಿಗೂ ಯೆಹೂದ್ಯರಲ್ಲದವರಿಗೂ ಬೆಳಕಿನ ಸಂದೇಶವನ್ನು ತರುವರು ಎಂದು ಪ್ರವಾದಿಗಳು ಮತ್ತು ಮೋಶೆಯು ಹೇಳಿದ್ದಾರೆ,” ಎಂದನು.</verse>
				<verse number="24">ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಧ್ಯೆ ಬಾಯಿ ಹಾಕಿ, “ಪೌಲನೇ, ನಿನಗೆ ಹುಚ್ಚುಹಿಡಿದಿದೆ! ನಿನ್ನ ಅಧಿಕಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ,” ಎಂದು ಗಟ್ಟಿಯಾಗಿ ಕೂಗಿದನು.</verse>
				<verse number="25">ಆದರೆ ಪೌಲನು, “ಬಹು ಗೌರವವುಳ್ಳ ಫೆಸ್ತರೇ, ನಾನು ಹುಚ್ಚನಲ್ಲ, ಆದರೆ ನಾನು ಸತ್ಯವನ್ನೇ ಸ್ವಸ್ಥಬುದ್ಧಿಯಿಂದ ಮಾತನಾಡುತ್ತಿರುವೆನು.</verse>
				<verse number="26">ಏಕೆಂದರೆ ರಾಜರಿಗೆ ಈ ಎಲ್ಲಾ ಸಂಗತಿಗಳ ಪರಿಚಯವಿದೆ. ರಾಜರೊಂದಿಗೆ ನಾನು ಸಹ ಭರವಸೆಯಿಂದ ಮಾತನಾಡುತ್ತಿರುವೆನು. ಇವುಗಳಲ್ಲಿ ಯಾವುದೂ ರಾಜರ ಗಮನಕ್ಕೆ ಬಾರದೆ ಹೋಗಿಲ್ಲ ಎಂಬುದು ನನ್ನ ದೃಢ ನಂಬಿಕೆ. ಏಕೆಂದರೆ ಇದು ಮೂಲೆಯಲ್ಲಿ ನಡೆದ ಸಂಗತಿಯಲ್ಲ.</verse>
				<verse number="27">ಅಗ್ರಿಪ್ಪ ರಾಜರೇ, ನೀವು ಪ್ರವಾದಿಗಳನ್ನು ನಂಬುತ್ತೀರೋ? ನೀವು ನಂಬುತ್ತೀರೆಂದು ನಾನು ಬಲ್ಲೆ,” ಎಂದನು.</verse>
				<verse number="28">ಆಗ ಅಗ್ರಿಪ್ಪನು ಪೌಲನಿಗೆ, “ಅಲ್ಪ ಸಮಯದಲ್ಲಿಯೇ ನನ್ನನ್ನು ಕ್ರಿಸ್ತ ವಿಶ್ವಾಸಿಯನ್ನಾಗಿ ಮಾಡಬೇಕೆಂದಿದ್ದೀಯಾ?” ಎಂದನು.</verse>
				<verse number="29">ಪೌಲನು, “ಅಲ್ಪ ಕಾಲದಲ್ಲಾಗಲಿ, ದೀರ್ಘಕಾಲದಲ್ಲಾಗಲಿ ನೀವಷ್ಟೇ ಅಲ್ಲ, ನನ್ನ ಮಾತುಗಳನ್ನು ಇಂದು ಆಲಿಸುತ್ತಿರುವ ಪ್ರತಿಯೊಬ್ಬರೂ ಈ ಬೇಡಿಗಳನ್ನು ಹೊರತು ನನ್ನಂತೆಯೇ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ,” ಎಂದನು.</verse>
				<verse number="30">ರಾಜನು ಎದ್ದೇಳಲು ಅವನೊಂದಿಗೆ ರಾಜ್ಯಪಾಲನೂ ಬೆರ್ನಿಕೆಯೂ ಅವರೊಂದಿಗೆ ಕುಳಿತಿದ್ದವರೆಲ್ಲರೂ ಎದ್ದರು.</verse>
				<verse number="31">ಅವರು ಅಲ್ಲಿಂದ ಹೊರಗೆ ಬಂದು, ಒಬ್ಬರೊಂದಿಗೊಬ್ಬರು ಮಾತನಾಡುತ್ತಾ, “ಮರಣದಂಡನೆಗಾಗಲಿ, ಸೆರೆಮನೆ ವಾಸಕ್ಕಾಗಲಿ ಯೋಗ್ಯವಾದ ಏನನ್ನೂ ಈ ಮನುಷ್ಯನು ಮಾಡಿಲ್ಲ,” ಎಂದರು.</verse>
				<verse number="32">ಆಗ ಅಗ್ರಿಪ್ಪನು ಫೆಸ್ತನಿಗೆ, “ಪೌಲನು ನೇರವಾಗಿ ಕೈಸರನಿಗೆ ಬೇಡಿಕೆ ಸಲ್ಲಿಸದಿದ್ದರೆ ಇವನನ್ನು ಬಿಡುಗಡೆ ಮಾಡಬಹುದಾಗಿತ್ತು,” ಎಂದನು.</verse>
			</chapter>
			<chapter number="27">
				<verse number="1">ನಾವು ಇಟಲಿಗೆ ಸಮುದ್ರ ಪ್ರಯಾಣ ಮಾಡಬೇಕೆಂದು ತೀರ್ಮಾನವಾದ ಮೇಲೆ ಪೌಲನನ್ನೂ ಇತರ ಕೈದಿಗಳನ್ನೂ ಯೂಲ್ಯನೆಂಬ ಹೆಸರಿನ ಒಬ್ಬ ಶತಾಧಿಪತಿಗೆ ಒಪ್ಪಿಸಿದರು. ಅವನು ಚಕ್ರವರ್ತಿಯ ದಳಕ್ಕೆ ಸೇರಿದವನು.</verse>
				<verse number="2">ಆಗ ಅದ್ರಮಿತ್ತಿಯದಿಂದ ಬಂದು ಏಷ್ಯಾ ಪ್ರಾಂತದ ಬಂದರುಗಳಿಗೆ ಹೋಗಲು ಸಿದ್ಧವಾಗಿದ್ದ ನೌಕೆಯನ್ನೇರಿ ನಾವು ಪ್ರಯಾಣ ಪ್ರಾರಂಭಿಸಿದೆವು. ಥೆಸಲೋನಿಕದಿಂದ ಬಂದ ಮಕೆದೋನ್ಯದ ಅರಿಸ್ತಾರ್ಕನು ನಮ್ಮೊಂದಿಗಿದ್ದನು.</verse>
				<verse number="3">ಮರುದಿನ ನಾವು ಸೀದೋನಿಗೆ ತಲುಪಿದೆವು. ಪೌಲನಿಗೆ ಯೂಲ್ಯನು ದಯೆತೋರಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗುವುದಕ್ಕೂ ಅವರಿಂದ ಉಪಚಾರವನ್ನು ಹೊಂದುವುದಕ್ಕೂ ಅನುಮತಿಸಿದನು.</verse>
				<verse number="4">ಅಲ್ಲಿಂದ ಹೊರಟು, ಎದುರುಗಾಳಿ ಬೀಸುತ್ತಿದ್ದದರಿಂದ ನಾವು ಸಮುದ್ರ ಪ್ರಯಾಣಮಾಡಿ ಸೈಪ್ರಸ್ ದ್ವೀಪ ಸಮೀಪವಾಗಿ,</verse>
				<verse number="5">ಕಿಲಿಕ್ಯಯ ಹಾಗೂ ಪಂಫುಲ್ಯ ಪ್ರಾಂತ ತೀರಗಳ ಎದುರಾಗಿರುವ ಸಮುದ್ರವನ್ನು ದಾಟಿ, ಲುಕೀಯ ಪ್ರಾಂತದ ಮುರ ಪಟ್ಟಣ ಎಂಬಲ್ಲಿಗೆ ತಲುಪಿದೆವು.</verse>
				<verse number="6">ಅಲ್ಲಿ ಇಟಲಿಗೆ ಪ್ರಯಾಣಮಾಡುತ್ತಿದ್ದ ಅಲೆಕ್ಸಾಂದ್ರಿಯದ ನೌಕೆಯನ್ನು ಶತಾಧಿಪತಿಯು ಕಂಡು ನಮ್ಮನ್ನು ಆ ನೌಕೆಯಲ್ಲಿ ಹತ್ತಿಸಿದನು.</verse>
				<verse number="7">ಅನೇಕ ದಿನಗಳವರೆಗೆ ನಮ್ಮ ಪ್ರಯಾಣ ನಿಧಾನವಾಗಿ ಸಾಗಿತು. ಕ್ನೀದ ಪಟ್ಟಣ ಎಂಬಲ್ಲಿಗೆ ತಲುಪುವವರೆಗೆ ಬಹಳ ಪ್ರಯಾಸ ಪಡಬೇಕಾಯಿತು. ಎದುರುಗಾಳಿಯು ಅಡ್ಡಿಯಾದದ್ದರಿಂದ, ಸಲ್ಮೋನೆ ಭೂಶಿರವನ್ನು ದಾಟಿ, ಅದರ ಎದುರಾಗಿರುವ ಕ್ರೇತದ್ವೀಪವನ್ನು ತಲುಪಿದೆವು.</verse>
				<verse number="8">ಆ ದ್ವೀಪದ ಕರಾವಳಿಯಲ್ಲಿಯೇ ಕಷ್ಟದಿಂದ ಮುಂದೆ ಸಾಗುತ್ತಾ, “ಚಂದರೇವುಗಳು” ಎಂದು ಕರೆಯಲಾಗುವ ಸ್ಥಳಕ್ಕೆ ಬಂದೆವು. ಅದು ಲಸಾಯ ಪಟ್ಟಣಕ್ಕೆ ಸಮೀಪದಲ್ಲಿತ್ತು.</verse>
				<verse number="9">ಬಹಳ ಸಮಯ ಕಳೆದುಹೋಯಿತು. ದೋಷಪರಿಹಾರದ ದಿನವು ಸಹ ಮುಗಿದು ಹೋಯಿತು. ಈ ಸಂದರ್ಭದಲ್ಲಿ ಸಮುದ್ರ ಪ್ರಯಾಣ ಅಪಾಯಕರವಾಗಿದ್ದುದರಿಂದ ಪೌಲನು,</verse>
				<verse number="10">“ಸಹೋದರರೇ, ನಮ್ಮ ಸಮುದ್ರ ಪ್ರಯಾಣವು ಅಪಾಯಕಾರಿಯಾಗಿರುವಂತೆ ತೋರುತ್ತದೆ. ಇದರಿಂದ ನಮ್ಮ ನೌಕೆಗೂ ಸರಕಿಗೂ ಅಷ್ಟೇ ಅಲ್ಲ, ನಮ್ಮ ಪ್ರಾಣಗಳಿಗೂ ದೊಡ್ಡ ಹಾನಿ ಬರುವ ಸಂಭವವಿದೆ,” ಎಂದು ಎಚ್ಚರಿಸಿದನು.</verse>
				<verse number="11">ಆದರೆ ಶತಾಧಿಪತಿಯು ಪೌಲನು ಹೇಳಿದ್ದಕ್ಕೆ ಕಿವಿಗೊಡದೆ ನೌಕೆಯ ನಾವಿಕನು ಹಾಗೂ ಯಜಮಾನನು ಹೇಳಿದ ಮಾತುಗಳಿಗೆ ಕಿವಿಗೊಟ್ಟನು.</verse>
				<verse number="12">ಆದರೆ ಚಳಿಗಾಲ ಕಳೆಯಲು ಆ ಬಂದರು ಅನುಕೂಲವಾಗಿರಲಿಲ್ಲ. ಆದ್ದರಿಂದ ಹೆಚ್ಚು ಮಂದಿ ಪ್ರಯಾಣ ಮುಂದುವರಿಸಬೇಕೆಂದು ತೀರ್ಮಾನಿಸಿದರು. ಸಾಧ್ಯವಾದರೆ ಫೊಯಿನಿಕ್ಸನ್ನು ತಲುಪಿ ಅಲ್ಲಿಯೇ ಚಳಿಗಾಲವನ್ನು ಕಳೆಯಬೇಕೆಂಬುದು ಅವರ ಯೋಚನೆಯಾಗಿತ್ತು. ಫೊಯಿನಿಕ್ಸ, ಕ್ರೇತದ್ವೀಪದ ಒಂದು ಬಂದರು. ಇದು ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿತ್ತು.</verse>
				<verse number="13">ದಕ್ಷಿಣ ಸುಳಿಗಾಳಿ ಬೀಸಲು ಪ್ರಾರಂಭಿಸಿದಾಗ, ಅವರು ತಾವು ಬಯಸಿದ್ದು ದೊರೆಯಿತೆಂದು ಭಾವಿಸಿದರು; ಆದ್ದರಿಂದ ಅವರು ಲಂಗರು ಎತ್ತಿಕಟ್ಟಿ ಕ್ರೇತದ್ವೀಪದ ತೀರದ ಸಮೀಪವಾಗಿಯೇ ಸಮುದ್ರ ಪ್ರಯಾಣ ಬೆಳೆಸಿದರು.</verse>
				<verse number="14">ಆದರೆ ಸ್ವಲ್ಪ ಸಮಯದಲ್ಲಿಯೇ “ಈಶಾನ್ಯ ಮಾರುತ” ಎಂಬ ಪ್ರಚಂಡ ಗಾಳಿ ದ್ವೀಪದ ಕಡೆಯಿಂದ ಬೀಸತೊಡಗಿತು.</verse>
				<verse number="15">ನೌಕೆ ಬಿರುಗಾಳಿಗೆ ಸಿಕ್ಕಿಕೊಂಡು ಮುಂದೆ ಹೋಗಲಾರದೆ ಇರಲು, ಗಾಳಿ ಬೀಸಿದ ಕಡೆಗೆ ನೂಕಿಸಿಕೊಂಡು ಹೋದೆವು.</verse>
				<verse number="16">ಕ್ಲೌಡ ಎಂಬ ಪುಟ್ಟ ದ್ವೀಪದ ಮರೆಯಲ್ಲಿ ಹೋಗುತ್ತಿದ್ದಾಗ, ಜೀವರಕ್ಷಕ ದೋಣಿಯನ್ನು ಸರಿಪಡಿಸಿಕೊಂಡು ಹೋಗುವುದು ನಮಗೆ ಕಷ್ಟಕರವಾಯಿತು.</verse>
				<verse number="17">ನೌಕೆಯವರು ಅದನ್ನು ಮೇಲಕ್ಕೆಳೆದು ಹಗ್ಗಗಳಿಂದ ನೌಕೆಯ ಕೆಳಭಾಗಕ್ಕೆ ಬಿಗಿಯಾಗಿ ಕಟ್ಟಿದರು. ಸುರ್ತಿಸ್ ಎಂಬ ಉಸುಬಿನಲ್ಲಿ ನೌಕೆ ಸಿಕ್ಕಿಕೊಳ್ಳಬಹುದೆಂಬ ಭಯದಿಂದ ಅವರು ನೌಕೆಯ ಹಾಯಿಯನ್ನು ಇಳಿಸಿ, ಗಾಳಿ ಬೀಸುತ್ತಿದ್ದ ಕಡೆಗೆ ನೌಕೆ ತೇಲುವಂತೆ ಬಿಟ್ಟರು.</verse>
				<verse number="18">ಚಂಡಮಾರುತದಿಂದ ನಾವು ಬಹಳ ಹೊಯ್ದಾಡಿದ್ದರಿಂದ ಮರುದಿನ ಅವರು ಸರಕುಗಳನ್ನು ನೌಕೆಯಿಂದ ಹೊರಗೆ ಎಸೆಯಲು ಪ್ರಾರಂಭಿಸಿದರು.</verse>
				<verse number="19">ಮೂರನೆಯ ದಿನ ನೌಕೆಯ ಅಡ್ಡ ಮರವನ್ನು ತಮ್ಮ ಕೈಗಳಿಂದಲೇ ಎತ್ತಿ ಹೊರಗೆ ಎಸೆದರು.</verse>
				<verse number="20">ಅನೇಕ ದಿನಗಳವರೆಗೆ ಸೂರ್ಯನನ್ನಾಗಲಿ, ನಕ್ಷತ್ರಗಳನ್ನಾಗಲಿ ಕಾಣದೆ ಚಂಡಮಾರುತ ಬೀಸುತ್ತಲೇ ಇದ್ದುದರಿಂದ ನಾವು ತಪ್ಪಿಸಿಕೊಳ್ಳುವ ಎಲ್ಲಾ ನಿರೀಕ್ಷೆಯನ್ನು ಕಳೆದುಕೊಂಡೆವು.</verse>
				<verse number="21">ಬಹಳ ದಿನಗಳವರೆಗೆ ಜನರು ಊಟ ಮಾಡದೇ ಇದ್ದಾಗ, ಪೌಲನು ಅವರ ಮುಂದೆ ಎದ್ದು ನಿಂತುಕೊಂಡು ಹೀಗೆ ಹೇಳಿದನು: “ಸ್ನೇಹಿತರೇ, ನೀವು ಕ್ರೇತದಿಂದ ಮುಂದೆ ಪ್ರಯಾಣ ಮಾಡಬಾರದೆಂದು ಹೇಳಿದ ನನ್ನ ಮಾತಿಗೆ ವಿಧೇಯರಾಗಿದ್ದರೆ ಈ ಕಷ್ಟನಷ್ಟವನ್ನು ತಡೆಯಬಹುದಿತ್ತು.</verse>
				<verse number="22">ಈಗಲಾದರೂ ನೀವು ಧೈರ್ಯ ಕಳೆದುಕೊಳ್ಳಬೇಡಿರಿ ಎಂದು ನಿಮಗೆ ಸಲಹೆ ಕೊಡುತ್ತೇನೆ. ನಿಮ್ಮಲ್ಲಿ ಯಾರಿಗೂ ಪ್ರಾಣ ಹಾನಿಯಾಗುವುದಿಲ್ಲ. ನೌಕೆ ಮಾತ್ರವೇ ನಾಶವಾಗಿ ಹೋಗುವುದು.</verse>
				<verse number="23">ನಾನು ಯಾವ ದೇವರಿಗೆ ಸೇರಿದ್ದೇನೋ ಮತ್ತು ಯಾರನ್ನು ಸೇವೆ ಮಾಡುತ್ತಿದ್ದೇನೋ ಆ ದೇವರ ದೂತನೊಬ್ಬನು ನಿನ್ನೆ ರಾತ್ರಿ ನನ್ನ ಬಳಿ ನಿಂತುಕೊಂಡು,</verse>
				<verse number="24">‘ಪೌಲನೇ, ಭಯಪಡಬೇಡ. ನೀನು ಕೈಸರನ ಮುಂದೆ ನಿಲ್ಲಬೇಕು. ಇಗೋ, ದೇವರು ನಿನ್ನೊಂದಿಗೆ ಪ್ರಯಾಣ ಮಾಡುತ್ತಿರುವವರ ಪ್ರಾಣಗಳನ್ನು ನಿನಗೆ ಉಳಿಸಿಕೊಟ್ಟಿದ್ದಾರೆ,’ ಎಂದನು.</verse>
				<verse number="25">ಆದ್ದರಿಂದ ಗೆಳೆಯರೇ, ಧೈರ್ಯಗೊಳ್ಳಿರಿ, ನನಗೆ ಹೇಳಿದಂತೆಯೇ ಸಂಭವಿಸುವುದೆಂದು ನಾನು ದೇವರನ್ನು ನಂಬುತ್ತೇನೆ.</verse>
				<verse number="26">ಆದರೆ ನಾವು ಯಾವುದೋ ಒಂದು ದ್ವೀಪದ ದಡದಲ್ಲಿ ಅಪ್ಪಳಿಸುತ್ತೇವೆ,” ಎಂದನು.</verse>
				<verse number="27">ಹದಿನಾಲ್ಕನೇ ರಾತ್ರಿ ಬಂದ ಮೇಲೆ ನಾವು ಆದ್ರಿಯ ಸಮುದ್ರದಲ್ಲಿ ಬಿರುಗಾಳಿಯು ನಮ್ಮನ್ನು ಹೊಯ್ದಾಡಿಸುತ್ತಿದ್ದಾಗ, ಸುಮಾರು ಮಧ್ಯರಾತ್ರಿಯಲ್ಲಿ ನಾವು ನೆಲವನ್ನು ತಲುಪುತ್ತಿದ್ದೇವೆಂದು ನಾವಿಕರು ಭಾವಿಸಿ,</verse>
				<verse number="28">ನೀರಿನ ಆಳವನ್ನು ಪರೀಕ್ಷಿಸಿದಾಗ, ಅದು ನೂರಿಪ್ಪತ್ತು ಅಡಿ ಆಳವೆಂದು ಕಂಡುಕೊಂಡರು. ಸ್ವಲ್ಪ ಸಮಯದ ತರುವಾಯ ಆಳ ನೋಡಿದಾಗ, ಅದು ತೊಂಬತ್ತು ಅಡಿಯಿತ್ತು.</verse>
				<verse number="29">ನಾವು ಬಂಡೆಗಳಿಗೆ ಅಪ್ಪಳಿಸಬಹುದೆಂಬ ಭಯದಿಂದ, ಹಿಂಭಾಗದಿಂದ ನಾಲ್ಕು ಲಂಗರುಗಳನ್ನು ಕೆಳಗಿಳಿಸಿ, ಬೆಳಗಾಗಲೆಂದು ಹಾರೈಸುತ್ತಿದ್ದೆವು.</verse>
				<verse number="30">ನೌಕೆಯಿಂದ ತಪ್ಪಿಸಿಕೊಂಡು ಹೋಗಲು ನಾವಿಕರು ನೌಕೆಯ ಮುಂಭಾಗದಲ್ಲಿದ್ದ ಲಂಗರುಗಳನ್ನು ಕೆಳಗಿಳಿಸುವ ನೆಪದಿಂದ ದೋಣಿಯನ್ನು ಸಮುದ್ರದಲ್ಲಿ ಇಳಿಸಿದರು.</verse>
				<verse number="31">ಆಗ ಪೌಲನು ಶತಾಧಿಪತಿಗೂ ಸೈನಿಕರಿಗೂ, “ಈ ಜನರು ನೌಕೆಯಲ್ಲಿ ಉಳಿದುಕೊಳ್ಳದಿದ್ದರೆ ನೀವು ತಪ್ಪಿಸಿಕೊಳ್ಳುವುದಕ್ಕಾಗುವುದಿಲ್ಲ,” ಎಂದನು.</verse>
				<verse number="32">ಆದ್ದರಿಂದ ಸೈನಿಕರು ದೋಣಿಗೆ ಕಟ್ಟಿದ್ದ ಹಗ್ಗಗಳನ್ನು ಕಡಿದುಹಾಕಿ ಅದು ಸಮುದ್ರದ ಪಾಲಾಗುವಂತೆ ಮಾಡಿದರು.</verse>
				<verse number="33">ಬೆಳಗಾಗುತ್ತಿದ್ದಂತೆ ಪೌಲನು ಅವರೆಲ್ಲರೂ ಏನನ್ನಾದರೂ ತಿನ್ನಬೇಕೆಂದು ಒತ್ತಾಯ ಮಾಡಿ, “ಕಳೆದ ಹದಿನಾಲ್ಕು ದಿನಗಳಿಂದ ನೀವು ಕಾದುಕೊಂಡವರಾಗಿ ಊಟವನ್ನೇ ಮಾಡಿಲ್ಲ.</verse>
				<verse number="34">ಆದ್ದರಿಂದ ಊಟಮಾಡಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಇದು ನಿಮ್ಮ ಪ್ರಾಣವನ್ನು ಉಳಿಸಿಕೊಳ್ಳುವುದಕ್ಕಾಗಿಯೇ. ನೀವು ಜೀವದಿಂದ ಉಳಿಯಬೇಕು. ಏಕೆಂದರೆ ನಿಮ್ಮ ತಲೆಕೂದಲು ಒಂದಾದರೂ ನಾಶವಾಗುವುದಿಲ್ಲ,” ಎಂದನು.</verse>
				<verse number="35">ಹೀಗೆ ಹೇಳಿದ ನಂತರ ಅವನು ರೊಟ್ಟಿಯನ್ನು ತೆಗೆದುಕೊಂಡು ಅವರೆಲ್ಲರ ಎದುರಿನಲ್ಲಿ ದೇವರಿಗೆ ಕೃತಜ್ಞತೆ ಸಲ್ಲಿಸಿ, ಅದನ್ನು ಮುರಿದು ತಿನ್ನಲು ಪ್ರಾರಂಭಿಸಿದನು.</verse>
				<verse number="36">ಅವರೆಲ್ಲರೂ ಧೈರ್ಯಹೊಂದಿ ಊಟಮಾಡಿದರು.</verse>
				<verse number="37">ಅಲ್ಲಿ ನೌಕೆಯಲ್ಲಿ ನಾವೆಲ್ಲಾ ಒಟ್ಟು ಇನ್ನೂರ ಎಪ್ಪತ್ತಾರು ಜನರಿದ್ದೆವು.</verse>
				<verse number="38">ಎಲ್ಲರೂ ಸಾಕಷ್ಟು ಊಟಮಾಡಿದ ಮೇಲೆ ಗೋಧಿಯನ್ನು ಸಮುದ್ರದಲ್ಲಿ ಎಸೆದು ನೌಕೆಯ ಭಾರವನ್ನು ಹಗುರಗೊಳಿಸಿದರು.</verse>
				<verse number="39">ಬೆಳಗಾದ ಮೇಲೆ ನೆಲವನ್ನು ಗುರುತಿಸಲು ಅವರಿಗೆ ಸಾಧ್ಯವಾಗಲಿಲ್ಲ. ಆದರೆ ಅವರು ದಡವನ್ನು ಕಂಡು ಸಾಧ್ಯವಾದರೆ ಅಲ್ಲಿ ನೌಕೆಯನ್ನು ನಿಲ್ಲಿಸಬೇಕೆಂದು ತೀರ್ಮಾನಿಸಿದರು.</verse>
				<verse number="40">ಲಂಗರುಗಳನ್ನು ಸಡಿಲಗೊಳಿಸಿ ಅವುಗಳನ್ನು ಸಮುದ್ರದಲ್ಲಿ ಬಿಟ್ಟರು. ಚುಕ್ಕಾಣಿಗಳಿಗೆ ಕಟ್ಟಿದ್ದ ಹಗ್ಗಗಳನ್ನು ಬಿಚ್ಚಿದರು. ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ನೌಕೆ ದಡದ ಕಡೆಗೆ ಚಲಿಸುವಂತೆ ಮಾಡಿದರು.</verse>
				<verse number="41">ಆದರೆ ನೌಕೆ ಮಧ್ಯದಲ್ಲಿ ಮರುಳು ದಿಬ್ಬಕ್ಕೆ ಅಪ್ಪಳಿಸಿ ಮುಳುಗಲಿಕ್ಕೆ ಪ್ರಾರಂಭಿಸಿತು. ನೌಕೆಯ ಮುಂಭಾಗ ಮರಳಲ್ಲಿ ಸಿಕ್ಕಿ ಅಲ್ಲಾಡದೇ ನಿಂತಿತು; ಹಿಂಭಾಗ ಬಿರುಗಾಳಿಯ ಹೊಡೆತಕ್ಕೆ ಸಿಕ್ಕಿ ಮುರಿದುಹೋಯಿತು.</verse>
				<verse number="42">ಆಗ ಕೈದಿಗಳು ಈಜಿಕೊಂಡು ತಪ್ಪಿಸಿಕೊಳ್ಳದಂತೆ ಸೈನಿಕರು ಅವರನ್ನು ಕೊಲ್ಲಲು ಯೋಚನೆ ಮಾಡಿದರು.</verse>
				<verse number="43">ಆದರೆ ಶತಾಧಿಪತಿಯು ಪೌಲನನ್ನು ಉಳಿಸಬೇಕೆಂದು ಬಯಸಿ, ಸೈನಿಕರು ಹಾಗೆ ಮಾಡದಂತೆ ನೋಡಿಕೊಂಡು, ಈಜಲು ಬಲ್ಲವರು ಮೊದಲು ಸಮುದ್ರದಲ್ಲಿ ಜಿಗಿದು ಭೂಮಿಯನ್ನು ತಲುಪಬೇಕೆಂದು ಆಜ್ಞಾಪಿಸಿದನು.</verse>
				<verse number="44">ಕೆಲವರು ಹಲಗೆಗಳ ಮೇಲೆ ಮತ್ತು ಕೆಲವರು ನೌಕೆಯ ತುಂಡುಗಳ ಸಹಾಯದಿಂದ ದಡ ಸೇರಬೇಕೆಂದು ಆಜ್ಞಾಪಿಸಿದನು. ಹೀಗೆ ಎಲ್ಲರೂ ಸುರಕ್ಷಿತವಾಗಿ ದಡ ಸೇರಿದರು.</verse>
			</chapter>
			<chapter number="28">
				<verse number="1">ನಾವು ಸುರಕ್ಷಿತವಾಗಿ ದಡ ಸೇರಿದ ಮೇಲೆ, ಆ ದ್ವೀಪವು ಮಾಲ್ಟ ದ್ವೀಪವೆಂದು ಕಂಡುಕೊಂಡೆವು.</verse>
				<verse number="2">ಆ ದ್ವೀಪದ ನಿವಾಸಿಗಳು ನಮಗೆ ಅಸಾಧಾರಣವಾದ ದಯೆತೋರಿಸಿದರು. ಆಗ ಮಳೆ ಬರುತ್ತಿದ್ದು ಬಹಳ ಚಳಿಯಿದ್ದುದರಿಂದ ಅವರು ಬೆಂಕಿಹೊತ್ತಿಸಿ ನಮ್ಮನ್ನು ಬರಮಾಡಿಕೊಂಡರು.</verse>
				<verse number="3">ಪೌಲನು ಕಟ್ಟಿಗೆ ಕೂಡಿಸಿ ಹೊರೆಯನ್ನು ತಂದು ಬೆಂಕಿಯಲ್ಲಿ ಹಾಕಲು ಶಾಖದಿಂದ ಒಂದು ಸರ್ಪವು ಹೊರಬಂದು ಅವನ ಕೈಗೆ ಸುತ್ತಿಕೊಂಡಿತು.</verse>
				<verse number="4">ಸರ್ಪವು ಪೌಲನ ಕೈಗೆ ಸುತ್ತಿಕೊಂಡಿರುವುದನ್ನು ದ್ವೀಪ ನಿವಾಸಿಗಳು ಕಂಡಾಗ, “ನಿಶ್ವಯವಾಗಿ ಈ ಮನುಷ್ಯನು ಕೊಲೆಗಾರನಾಗಿರಬೇಕು. ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಅವನನ್ನು ಜೀವಿಸಲಿಕ್ಕೆ ಬಿಡಲಿಲ್ಲ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.</verse>
				<verse number="5">ಆದರೆ ಪೌಲನು ಸರ್ಪವನ್ನು ಬೆಂಕಿಯೊಳಗೆ ಝಾಡಿಸಿ ಬಿಟ್ಟನು. ಅವನಿಗೆ ಯಾವ ಕೇಡೂ ಆಗಲಿಲ್ಲ.</verse>
				<verse number="6">ಅವನು ಬಾತುಹೋಗುತ್ತಾನೆ ಅಥವಾ ಇದ್ದಕ್ಕಿದ್ದಂತೆ ಸತ್ತು ಹೋಗುತ್ತಾನೆ ಎಂದು ಜನರು ಕಾದಿದ್ದರು. ಆದರೆ ಬಹಳ ಹೊತ್ತು ಕಾದು ನೋಡಿದ ಮೇಲೆ, ಅವನಿಗೆ ಕೆಟ್ಟದ್ದೇನೂ ಆಗದಿರುವುದನ್ನು ಕಂಡು ಅವರು ತಮ್ಮ ಮನಸ್ಸುಗಳನ್ನು ಬದಲಾಯಿಸಿಕೊಂಡು, “ಇವನೊಬ್ಬ ದೇವರು” ಎಂದು ಹೇಳಿಕೊಂಡರು.</verse>
				<verse number="7">ದ್ವೀಪದ ಮುಖ್ಯ ಅಧಿಕಾರಿ ಪೊಪ್ಲಿಯನೆಂಬುವನಿಗೆ ಸೇರಿದ ಹೊಲವು ಸಮೀಪದಲ್ಲಿಯೇ ಇತ್ತು. ಅವನು ನಮ್ಮನ್ನು ತನ್ನ ಮನೆಗೆ ಆಮಂತ್ರಿಸಿ ಮೂರು ದಿನ ನಮ್ಮನ್ನು ಉಪಚರಿಸಿದನು.</verse>
				<verse number="8">ಪೊಪ್ಲಿಯನ ತಂದೆ ಅಸ್ವಸ್ಥತೆಯಿಂದ ಮಲಗಿದ್ದನು. ಅವನು ಜ್ವರ ಮತ್ತು ರಕ್ತ ಭೇದಿಯಿಂದ ಬಾಧೆಗೊಳಗಾಗಿದ್ದನು. ಪೌಲನು ಅವನನ್ನು ಸಂದರ್ಶಿಸಿ, ಪ್ರಾರ್ಥನೆಮಾಡಿ, ಅವನ ಮೇಲೆ ತನ್ನ ಹಸ್ತಗಳನ್ನಿಟ್ಟು ಅವನನ್ನು ಗುಣಪಡಿಸಿದನು.</verse>
				<verse number="9">ಹೀಗಾದ ತರುವಾಯ ಆ ದ್ವೀಪದಲ್ಲಿಯೇ ಉಳಿದ ರೋಗಿಗಳು ಸಹ ಬಂದು ಗುಣಹೊಂದಿದರು.</verse>
				<verse number="10">ಅವರು ಅನೇಕ ವಿಧವಾಗಿ ನಮ್ಮನ್ನು ಗೌರವಿಸಿದರು. ನಾವು ಪ್ರಯಾಣಕ್ಕೆ ಸಿದ್ಧರಾದಾಗ ನಮಗೆ ಅಗತ್ಯವಿದ್ದವುಗಳನ್ನೆಲ್ಲಾ ತಂದು ಒದಗಿಸಿಕೊಟ್ಟರು.</verse>
				<verse number="11">ಮೂರು ತಿಂಗಳ ಸಮಯ ದಾಟಿದ ತರುವಾಯ ಆ ದ್ವೀಪದಲ್ಲಿ ಚಳಿಗಾಲ ಕಳೆದ ಮೇಲೆ ಒಂದು ನೌಕೆಯನ್ನು ಹತ್ತಿ ಹೊರಟೆವು. ಅದು ಅಶ್ವಿನಿ ಚಿಹ್ನೆಯಿದ್ದ ಅಲೆಕ್ಸಾಂದ್ರಿಯದ ಒಂದು ನೌಕೆಯಾಗಿತ್ತು.</verse>
				<verse number="12">ಸುರಕೂಸ್ ಎಂಬ ಪಟ್ಟಣವನ್ನು ತಲುಪಿ ಅಲ್ಲಿ ಮೂರು ದಿನ ಇದ್ದೆವು.</verse>
				<verse number="13">ಅಲ್ಲಿಂದ ಸಮುದ್ರ ಪ್ರಯಾಣ ಮುಂದುವರಿಸಿ ರೇಗಿಯ ಪಟ್ಟಣಕ್ಕೆ ಬಂದೆವು. ಮರುದಿನ ದಕ್ಷಿಣ ಗಾಳಿ ಬೀಸುತ್ತಿದ್ದುದರಿಂದ ಎರಡನೆಯ ದಿನ ಪೊತಿಯೋಲ ರೇವನ್ನು ತಲುಪಿದೆವು.</verse>
				<verse number="14">ಅಲ್ಲಿ ಕೆಲವು ಸಹೋದರರು ನಮ್ಮನ್ನು ಕಂಡು ಒಂದು ವಾರ ತಮ್ಮೊಂದಿಗೆ ಕಳೆಯಬೇಕೆಂದು ಆಮಂತ್ರಿಸಿದರು. ಕೊನೆಗೆ ನಾವು ರೋಮ್ ಸೇರಿದೆವು.</verse>
				<verse number="15">ಅಲ್ಲಿದ್ದ ಸಹೋದರರು ನಾವು ಬರುತ್ತೇವೆಂಬ ವಿಷಯವನ್ನು ಕೇಳಿ ನಮ್ಮನ್ನು ಎದುರುಗೊಳ್ಳಲು ಅಪ್ಪಿಯ ಪೇಟೆಗೂ ತ್ರಿಛತ್ರದ ಬಳಿಗೂ ಬಂದರು. ಪೌಲನು ಅವರನ್ನು ನೋಡಿ ದೇವರ ಸ್ತುತಿ ಮಾಡಿ ಧೈರ್ಯ ತಂದುಕೊಂಡನು.</verse>
				<verse number="16">ನಾವು ರೋಮ್ ಪಟ್ಟಣಕ್ಕೆ ಬಂದಾಗ, ತನ್ನ ಕಾವಲುಗಾರನಾಗಿದ್ದ ಸೈನಿಕನೊಂದಿಗೆ ಪ್ರತ್ಯೇಕವಾಗಿ ಇರಲು ಪೌಲನಿಗೆ ಅನುಮತಿ ದೊರೆಯಿತು.</verse>
				<verse number="17">ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ನಾಯಕರನ್ನು ಕರೆಯಿಸಿದನು. ಅವರೆಲ್ಲರೂ ಬಂದಾಗ ಅವರಿಗೆ, “ನನ್ನ ಸಹೋದರರೇ, ನಮ್ಮ ಜನರಿಗೂ ನಮ್ಮ ಪೂರ್ವಜರಿಗೂ ವಿರೋಧವಾಗಿ ನಾನು ಏನನ್ನೂ ಮಾಡಲಿಲ್ಲ. ಆದರೂ ನನ್ನನ್ನು ಯೆರೂಸಲೇಮಿನಲ್ಲಿ ಬಂಧಿಸಿ ರೋಮನ್ನರ ವಶಕ್ಕೆ ಒಪ್ಪಿಸಲಾಯಿತು.</verse>
				<verse number="18">ಅವರು ನನ್ನನ್ನು ವಿಚಾರಣೆ ಮಾಡಿ, ನಾನು ಮರಣಶಿಕ್ಷೆ ಹೊಂದಲು ಯಾವ ಅಪರಾಧವೂ ಇಲ್ಲದಿರುವುದನ್ನು ಕಂಡು ನನ್ನನ್ನು ಬಿಡುಗಡೆ ಮಾಡಲಿದ್ದರು.</verse>
				<verse number="19">ಆದರೆ ಯೆಹೂದ್ಯರು ಅದನ್ನು ವಿರೋಧಿಸಿದಾಗ, ನಾನು ನೇರವಾಗಿ ಕೈಸರನಿಗೆ ಮನವಿ ಮಾಡಿಕೊಳ್ಳಲೇಬೇಕಾಯಿತು. ನನಗೆ ಸ್ವದೇಶದವರ ವಿರೋಧವಾಗಿ ಹೊರಿಸಲು ಯಾವ ಆಪಾದನೆಯೂ ಇಲ್ಲ.</verse>
				<verse number="20">ಈ ಕಾರಣದಿಂದಲೇ ನಾನು ನಿಮ್ಮನ್ನು ಭೇಟಿಯಾಗಿ ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲರ ನಿರೀಕ್ಷೆಯ ನಿಮಿತ್ತವಾಗಿಯೇ ನಾನು ಈ ಸರಪಣಿಗಳಿಂದ ಬಂಧಿತನಾಗಿದ್ದೇನೆ,” ಎಂದನು.</verse>
				<verse number="21">ಅದಕ್ಕೆ ಅವರು, “ನಿನ್ನ ವಿಷಯದಲ್ಲಿ ಯೂದಾಯದಿಂದ ನಮಗೆ ಯಾವ ಪತ್ರವೂ ಬಂದಿಲ್ಲ. ಅಲ್ಲಿಂದ ಬಂದ ಸಹೋದರರಲ್ಲಿ ಯಾರೂ ನಿನ್ನ ವಿಷಯದಲ್ಲಿ ಏನನ್ನೂ ವರದಿ ಮಾಡಿಲ್ಲ. ನಿನ್ನ ಬಗ್ಗೆ ಯಾವ ಕೆಟ್ಟದ್ದನ್ನೂ ಹೇಳಿಲ್ಲ.</verse>
				<verse number="22">ಆದರೆ ನಿನ್ನ ಅಭಿಪ್ರಾಯಗಳೇನೆಂಬುದನ್ನು ಕೇಳಲು ನಮಗೆ ಮನಸ್ಸಿದೆ. ಏಕೆಂದರೆ ಈ ಪಂಥದ ವಿರುದ್ಧವಾಗಿ ಎಲ್ಲಾ ಕಡೆಗಳಲ್ಲಿ ಜನರು ಮಾತನಾಡುತ್ತಿರುವುದನ್ನು ನಾವು ಬಲ್ಲೆವು,” ಎಂದರು.</verse>
				<verse number="23">ಅವರು ಒಂದು ದಿನ ಪೌಲನೊಂದಿಗಿರಲು ಏರ್ಪಡಿಸಿ, ಅವನಿದ್ದ ಸ್ಥಳಕ್ಕೆ ಬಹುಮಂದಿ ಕೂಡಿಬಂದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಅವನು ದೇವರ ರಾಜ್ಯದ ಬಗ್ಗೆ ಖಚಿತವಾಗಿ ಸಾಕ್ಷಿ ಕೊಡುತ್ತಾ, ಮೋಶೆಯ ನಿಯಮ ಮತ್ತು ಪ್ರವಾದಿಗಳ ಗ್ರಂಥಗಳಿಂದ ಯೇಸುವಿನ ಬಗ್ಗೆ ವಿವರಿಸಿ ಅವರ ಮನವೊಲಿಸಲು ಪ್ರಯತ್ನಿಸಿದನು.</verse>
				<verse number="24">ಕೆಲವರಿಗೆ ಅವನು ಹೇಳಿದ್ದರ ಬಗ್ಗೆ ಮನದಟ್ಟಾಯಿತು.</verse>
				<verse number="25">ಆದರೆ ಬೇರೆಯವರು ನಂಬಲಿಲ್ಲ. ಅವರು ತಮ್ಮತಮ್ಮಲ್ಲಿಯೇ ಭಿನ್ನಾಭಿಪ್ರಾಯ ಉಳ್ಳವರಾಗಿರಲು ಪೌಲನು ಅವರಿಗೆ, “ಪವಿತ್ರಾತ್ಮ ದೇವರು ನಿಮ್ಮ ಪಿತೃಗಳಿಗೆ ಪ್ರವಾದಿ ಯೆಶಾಯನ ಮುಖಾಂತರ ಈ ಮಾತುಗಳನ್ನು ಸರಿಯಾಗಿಯೇ ಹೇಳಿದ್ದಾರೆ:</verse>
				<verse number="26">“ ‘ಈ ಜನರ ಬಳಿಗೆ ಹೋಗಿ ಹೇಳು, “ನೀವು ಕೇಳುತ್ತಲೇ ಇರುವಿರಿ, ಎಂದೆಂದೂ ಅರ್ಥಮಾಡಿಕೊಳ್ಳಲಾರಿರಿ; ನೀವು ಕಾಣುತ್ತಲೇ ಇರುವಿರಿ, ಎಂದೆಂದೂ ಅರಿತುಕೊಳ್ಳಲಾರಿರಿ.”</verse>
				<verse number="27">ಈ ಜನರ ಹೃದಯವು ಕಠೋರವಾಗಿದೆ; ಇವರ ಕಿವಿಗಳು ಕೇಳದ ಹಾಗೆ ಮಂದವಾಗಿವೆ, ಇವರು ತಮ್ಮ ಕಣ್ಣುಗಳನ್ನು ಮುಚ್ಚಿಕೊಂಡಿದ್ದಾರೆ. ಇಲ್ಲವಾದರೆ ಅವರು ತಮ್ಮ ಕಣ್ಣುಗಳಿಂದ ನೋಡಿ, ಕಿವಿಗಳಿಂದ ಕೇಳಿಸಿಕೊಂಡು, ತಮ್ಮ ಹೃದಯದಿಂದ ತಿಳಿದು, ನನ್ನ ಕಡೆಗೆ ತಿರುಗಿಕೊಂಡಿದ್ದರೆ, ನಾನು ಅವರನ್ನು ಸ್ವಸ್ಥಪಡಿಸುತ್ತಿದ್ದೆನು,’ ಎಂಬುದೇ.</verse>
				<verse number="28">“ಆದ್ದರಿಂದ ದೇವರ ರಕ್ಷಣೆಯು ಯೆಹೂದ್ಯರಲ್ಲದವರಿಗೆ ಒದಗಿ ಬಂದಿದೆ ಎಂಬುದು ನಿಮಗೆ ತಿಳಿದಿರಲಿ. ಅವರು ಅದಕ್ಕೆ ಕಿವಿಗೊಡುವರು,” ಎಂದನು.</verse>
				<verse number="29">ಪೌಲನು ಇದನ್ನು ಹೇಳಿದ ತರುವಾಯ ಯೆಹೂದ್ಯರು ತಮ್ಮತಮ್ಮಲ್ಲಿಯೇ ಕಟುವಾಗಿ ಚರ್ಚಿಸಿಕೊಳ್ಳುತ್ತಾ ಹೊರಟು ಹೋದರು.</verse>
				<verse number="30">ಪೌಲನು ತಾನು ಬಾಡಿಗೆಗೆ ತೆಗೆದುಕೊಂಡ ಮನೆಯಲ್ಲಿ ಎರಡು ವರ್ಷಗಳ ಕಾಲವಿದ್ದು ತನ್ನ ಬಳಿಗೆ ಬಂದವರನ್ನೆಲ್ಲಾ ಸ್ವಾಗತಿಸುತ್ತಿದ್ದನು.</verse>
				<verse number="31">ಅವನು ಧೈರ್ಯದಿಂದ ಯಾವ ಅಡ್ಡಿ ಆತಂಕಗಳಿಲ್ಲದೇ ದೇವರ ರಾಜ್ಯವನ್ನು ಪ್ರಕಟಿಸುತ್ತಾ, ಕರ್ತ ಆಗಿರುವ ಯೇಸುಕ್ರಿಸ್ತರ ವಿಷಯವಾಗಿ ಉಪದೇಶ ಮಾಡುತ್ತಾ ಇದ್ದನು.</verse>
			</chapter>
		</book>
		<book number="45">
			<chapter number="1">
				<verse number="1">ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನಾಗುವುದಕ್ಕೆ ಕರೆಹೊಂದಿದವನೂ ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಗೊಂಡವನೂ ಆಗಿರುವ ಪೌಲನು ಬರೆಯುವ ಪತ್ರ.</verse>
				<verse number="2">ದೇವರು ಮುಂಚಿತವಾಗಿ ಪವಿತ್ರ ವೇದಗಳಲ್ಲಿ ತಮ್ಮ ಪ್ರವಾದಿಗಳ ಮೂಲಕ ವಾಗ್ದಾನಮಾಡಿದ,</verse>
				<verse number="3">ಈ ಸುವಾರ್ತೆಯು ದೇವಪುತ್ರನ ವಿಷಯವಾದದ್ದು. ಯೇಸು ಮನುಷ್ಯತ್ವದ ಪ್ರಕಾರ ದಾವೀದನ ಸಂತಾನದವರೂ</verse>
				<verse number="4">ಸತ್ತವರೊಳಗಿಂದ ಪುನರುತ್ಥಾನಗೊಂಡು ಪರಿಶುದ್ಧತೆಯ ಆತ್ಮದ ಪ್ರಕಾರ ದೇವಪುತ್ರರೆಂದು ಪ್ರಬಲವಾಗಿ ನಿರ್ಣಯಿಸಲಾದವರೂ ಆಗಿದ್ದಾರೆ. ಇವರೇ ನಮ್ಮ ಕರ್ತ ಯೇಸು ಕ್ರಿಸ್ತ.</verse>
				<verse number="5">ಯೇಸುವಿನ ನಾಮದ ಮಹಿಮೆಗಾಗಿ ಯೆಹೂದ್ಯರಲ್ಲದವರಲ್ಲಿಯೂ ನಂಬಿಕೆಯ ವಿಧೇಯತೆ ಉಂಟಾಗುವುದಕ್ಕಾಗಿ ನಾವು ಯೇಸುವಿನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲರಾಗಿರುವುದನ್ನೂ ಹೊಂದಿದೆವು.</verse>
				<verse number="6">ಯೇಸು ಕ್ರಿಸ್ತನವರಾಗಲು ಕರೆಯಲಾದವರಲ್ಲಿ ಯೆಹೂದ್ಯರಲ್ಲದವರಲ್ಲಿ ನೀವೂ ಸಹ ಸೇರಿದ್ದೀರಿ.</verse>
				<verse number="7">ರೋಮ್ ನಗರದಲ್ಲಿ ದೇವರಿಗೆ ಪ್ರಿಯರೂ ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲಾದವರೂ ಆಗಿರುವವರೆಲ್ಲರಿಗೂ: ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ಕೃಪೆಯೂ ಶಾಂತಿಯೂ ಆಗಲಿ.</verse>
				<verse number="8">ಮೊದಲನೆಯದಾಗಿ, ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಕ್ರಿಸ್ತ ಯೇಸುವಿನ ಮೂಲಕ ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.</verse>
				<verse number="9">ದೇವಪುತ್ರನ ಸುವಾರ್ತೆಯನ್ನು ಸಾರುವುದರಿಂದ ದೇವರನ್ನೇ ನನ್ನ ಆತ್ಮದಲ್ಲಿ ಸೇವೆ ಮಾಡುವವನಾಗಿದ್ದೇನೆ. ಇದಕ್ಕೆ ದೇವರೇ ನನ್ನ ಸಾಕ್ಷಿ.</verse>
				<verse number="10">ನಾನು ಪ್ರಾರ್ಥನೆ ಮಾಡುವಾಗಲೆಲ್ಲಾ ತಪ್ಪದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತಾ ಇನ್ನು ಮೇಲಾದರೂ ನಿಮ್ಮ ಬಳಿಗೆ ಬರುವುದಕ್ಕೆ ದೇವರ ಚಿತ್ತದಿಂದ ನನಗೆ ಯಾವ ರೀತಿಯಲ್ಲಾದರೂ ಅನುಕೂಲವಾಗಬೇಕೆಂದು ಬೇಡಿಕೊಳ್ಳುತ್ತೇನೆ.</verse>
				<verse number="11">ನಿಮ್ಮನ್ನು ದೃಢಪಡಿಸುವುದಕ್ಕಾಗಿ ನಾನು ನಿಮಗೆ ಕೆಲವು ಆತ್ಮಿಕ ವರಗಳನ್ನು ಕೊಡಲು ನಿಮ್ಮನ್ನು ನೋಡಬೇಕೆಂದು ಅಪೇಕ್ಷಿಸುತ್ತೇನೆ.</verse>
				<verse number="12">ಹೀಗೆ ನಾವು ಒಬ್ಬರಿಂದೊಬ್ಬರ ನಂಬಿಕೆಯಿಂದ ಪರಸ್ಪರ ಪ್ರೋತ್ಸಾಹಗೊಳ್ಳಬೇಕು.</verse>
				<verse number="13">ಪ್ರಿಯರೇ, ನನ್ನ ಸೇವೆಯು ಯೆಹೂದ್ಯರಲ್ಲದವರಲ್ಲಿ ಫಲಉಂಟಾದಂತೆ ನಿಮ್ಮಲ್ಲಿಯೂ ಫಲಉಂಟಾಗಬೇಕೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಉದ್ದೇಶಿಸಿದೆನು. ಆದರೆ ಅದಕ್ಕೆ ಇಂದಿನವರೆಗೂ ಅಡ್ಡಿಯಾಯಿತೆಂದು ನಿಮಗೆ ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.</verse>
				<verse number="14">ಗ್ರೀಕರಿಗೂ ಗ್ರೀಕರಲ್ಲದವರಿಗೂ ಜ್ಞಾನಿಗಳಿಗೂ ಮೂಢರಿಗೂ ನಾನು ಸಾಲಗಾರನಾಗಿದ್ದೇನೆ.</verse>
				<verse number="15">ಹೀಗಿರುವುದರಿಂದ ರೋಮ್ ನಗರದಲ್ಲಿರುವ ನಿಮಗೂ ಸಹ ಸುವಾರ್ತೆಯನ್ನು ಸಾರುವುದಕ್ಕೆ ನಾನು ಉತ್ಸುಕನಾಗಿದ್ದೇನೆ.</verse>
				<verse number="16">ನಾನು ಸುವಾರ್ತೆಯ ವಿಷಯದಲ್ಲಿ ನಾಚಿಕೊಳ್ಳುವವನಲ್ಲ. ಏಕೆಂದರೆ ಅದು ಮೊದಲು ಯೆಹೂದ್ಯರಿಗೆ ಆಮೇಲೆ ಯೆಹೂದ್ಯರಲ್ಲದವರಿಗೆ, ಹೀಗೆ ನಂಬುವವರೆಲ್ಲರಿಗೂ ರಕ್ಷಣೆಯನ್ನು ಉಂಟುಮಾಡುವ ದೇವರ ಶಕ್ತಿಯಾಗಿದೆ.</verse>
				<verse number="17">ದೇವರಿಂದ ದೊರಕುವ ನೀತಿಯು ಸುವಾರ್ತೆಯಲ್ಲಿ ಪ್ರಕಟವಾಗಿದೆ. “ನೀತಿವಂತನು ನಂಬಿಕೆಯಿಂದಲೇ ಬದುಕುವನು,” ಎಂದು ಬರೆದಿರುವ ಪ್ರಕಾರ, ಆ ನೀತಿಯು ಪ್ರಾರಂಭದಿಂದ ಕೊನೆಯವರೆಗೆ ನಂಬಿಕೆಯಿಂದಲೇ ಆದದ್ದು.</verse>
				<verse number="18">ದುಷ್ಟತನದಿಂದ ಸತ್ಯವನ್ನು ಅಡಗಿಸುವವರಾದ ಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆ ಹಾಗೂ ದುಷ್ಟತನದ ಮೇಲೆ ದೇವರ ರೌದ್ರವು ಪರಲೋಕದಿಂದ ಪ್ರಕಟವಾಗುತ್ತಿದೆ.</verse>
				<verse number="19">ದೇವರ ವಿಷಯವಾಗಿ ತಿಳಿಯಬಹುದಾದದ್ದನ್ನು ಅವರಿಗೆ ಸ್ಪಷ್ಟಪಡಿಸಲಾಗಿದೆ. ಏಕೆಂದರೆ ಅದನ್ನು ಅವರಿಗೆ ದೇವರೇ ಪ್ರಕಟಿಸಿದರು.</verse>
				<verse number="20">ಹೇಗೆಂದರೆ ಕಣ್ಣಿಗೆ ಕಾಣದ ಗುಣಲಕ್ಷಣಗಳಾಗಿರುವ ದೇವರ ಗುಣವೂ ನಿತ್ಯಶಕ್ತಿಯೂ ದೈವಸ್ವಭಾವವೂ ಜಗದ ಸೃಷ್ಟಿ ದಿನದಿಂದ ಅವರು ಸೃಷ್ಟಿಸಿದವುಗಳ ಮೂಲಕ ಸ್ಪಷ್ಟವಾಗಿ ಕಂಡುಬರುತ್ತಿವೆ. ಹೀಗಿರುವುದರಿಂದ ಜನರಿಗೆ ತಪ್ಪಿಸಿಕೊಳ್ಳಲು ನೆಪ ಇಲ್ಲವಾಗಿದೆ.</verse>
				<verse number="21">ಏಕೆಂದರೆ ದೇವರನ್ನು ಅವರು ತಿಳಿದಿದ್ದರೂ ದೇವರೆಂದು ಮಹಿಮೆ ಪಡಿಸಲಿಲ್ಲ, ದೇವರ ಉಪಕಾರ ಸ್ಮರಿಸಲಿಲ್ಲ. ಆದರೆ ಅವರು ತಮ್ಮ ವಿಚಾರಗಳಲ್ಲಿ ವ್ಯರ್ಥರಾದರು. ವಿವೇಕವಿಲ್ಲದ ಅವರ ಹೃದಯವು ಕತ್ತಲಾಯಿತು.</verse>
				<verse number="22">ತಾವು ಜ್ಞಾನಿಗಳೆಂದು ಹೇಳಿಕೊಂಡರೂ ಮೂಢರಾಗಿದ್ದಾರೆ.</verse>
				<verse number="23">ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಶು, ಪಕ್ಷಿ, ಸರ್ಪಾದಿಗಳ ಮೂರ್ತಿಗಳೊಂದಿಗೆ ಬದಲಿಸಿಕೊಂಡರು.</verse>
				<verse number="24">ಆದಕಾರಣ ಅವರು ತಮ್ಮ ಹೃದಯದ ದುರಾಶೆಗಳಂತೆ ನಡೆದು ತಮ್ಮ ದೇಹಗಳನ್ನು ಮಲಿನ ಮಾಡಿಕೊಳ್ಳಲಿ ಎಂದು ದೇವರು ಅವರನ್ನು ಅಶುದ್ಧತೆಗೆ ಒಪ್ಪಿಸಿಬಿಟ್ಟರು.</verse>
				<verse number="25">ಅವರು ದೇವರ ಸತ್ಯವನ್ನು ಸುಳ್ಳನ್ನಾಗಿ ಬದಲಿಸಿಕೊಂಡು, ಸೃಷ್ಟಿಕರ್ತನನ್ನು ಆರಾಧಿಸದೆ ಸೃಷ್ಟಿವಸ್ತುಗಳನ್ನೇ ಪೂಜಿಸಿ ಸೇವೆ ಸಲ್ಲಿಸುವವರಾದರು. ಸೃಷ್ಟಿ ಕರ್ತನೇ ನಿರಂತರವಾಗಿ ಸ್ತುತಿ ಹೊಂದತಕ್ಕವರು. ಆಮೆನ್.</verse>
				<verse number="26">ಅವರು ಇಂಥದ್ದನ್ನು ಮಾಡಿದ್ದರಿಂದ ದೇವರು ಅವರನ್ನು ಕೇವಲ ಲಜ್ಜಾಸ್ಪದವಾದ ಕಾಮಾಭಿಲಾಷೆಗೆ ಒಪ್ಪಿಸಿಬಿಟ್ಟರು. ಹೇಗೆಂದರೆ ಅವರ ಸ್ತ್ರೀಯರು ಸಹ ಸ್ವಾಭಾವಿಕವಾದ ಭೋಗವನ್ನು ಬಿಟ್ಟು, ಅಸ್ವಾಭಾವಿಕವಾದದ್ದನ್ನು ಅನುಸರಿಸಿದರು.</verse>
				<verse number="27">ಅದರಂತೆ ಗಂಡಸರು ಸಹ ಸ್ವಾಭಾವಿಕವಾದ ಸ್ತ್ರೀಭೋಗವನ್ನು ಬಿಟ್ಟು ಒಬ್ಬರೊಂದಿಗೊಬ್ಬರು ಕಾಮಾತುರದಿಂದ ತಾಪಗೊಂಡರು. ಗಂಡಸರ ಸಂಗಡ ಗಂಡಸರು ಕೇವಲ ಅವಲಕ್ಷಣ ಕೃತ್ಯಗಳನ್ನು ನಡೆಸಿ ತಮ್ಮ ತಪ್ಪಿಗೆ ತಕ್ಕ ದಂಡನೆಯನ್ನು ಹೊಂದುವವರಾದರು.</verse>
				<verse number="28">ಇದಲ್ಲದೆ, ದೇವರನ್ನು ಒಪ್ಪಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡೆಸುವವರಾಗುವಂತೆ ದೇವರು ಅನಾಚಾರದ ಮನಸ್ಸಿಗೆ ಅವರನ್ನು ಒಪ್ಪಿಸಿದರು.</verse>
				<verse number="29">ಅವರು ಸಕಲ ವಿಧವಾದ ಅನ್ಯಾಯ, ದುರ್ಮಾರ್ಗತನ, ಲೋಭ, ದುಷ್ಟತ್ವ, ಹೊಟ್ಟೆಕಿಚ್ಚು, ಕೊಲೆ, ಜಗಳ, ಕಪಟ, ಹಗೆತನಗಳಿಂದಲೂ ತುಂಬಿದವರಾದರು.</verse>
				<verse number="30">ಅವರು ಕಿವಿ ಊದುವವರೂ ಚಾಡಿಹೇಳುವವರೂ ದೇವರನ್ನು ದ್ವೇಷಿಸುವವರೂ ಸೊಕ್ಕಿನವರೂ ಅಹಂಕಾರಿಗಳೂ ಬಡಾಯಿ ಕೊಚ್ಚುವವರೂ ಕೇಡನ್ನು ಕಲ್ಪಿಸುವವರೂ ತಂದೆತಾಯಿಗಳ ಮಾತನ್ನು ಕೇಳದವರೂ</verse>
				<verse number="31">ವಿವೇಚನೆಯಿಲ್ಲದವರೂ ನಂಬಿಕೆಯಿಲ್ಲದವರೂ ಮಮತೆಯಿಲ್ಲದವರೂ ಕರುಣೆಯಿಲ್ಲದವರೂ ಆದರು.</verse>
				<verse number="32">ಇಂಥವುಗಳನ್ನು ನಡೆಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೈವವಿಧಿಯನ್ನು ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಹಾಗೆ ಮಾಡುವವರನ್ನು ಮೆಚ್ಚುತ್ತಾರೆ.</verse>
			</chapter>
			<chapter number="2">
				<verse number="1">ಆದ್ದರಿಂದ, ಯಾವ ಕಾರಣಕ್ಕಾಗಿ ನೀನು ಇತರರಿಗೆ ತೀರ್ಪು ಮಾಡುತ್ತಿರುವೆಯೋ ಅದನ್ನೇ ನೀನೂ ಮಾಡುತ್ತಿರುವುದರಿಂದ ನಿನ್ನನ್ನು ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು. ಇತರರ ಮೇಲೆ ತೀರ್ಪುಮಾಡುವ ನಿನಗೆ ಹೇಳುವುದಕ್ಕೆ ನೆಪವಿಲ್ಲ.</verse>
				<verse number="2">ಆದರೆ ಅಂಥಾ ಅಪರಾಧಗಳನ್ನು ಮಾಡುವವರ ವಿಷಯದಲ್ಲಿ ದೇವರು ಮಾಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವುದೆಂದು ನಾವು ಬಲ್ಲೆವು.</verse>
				<verse number="3">ಮನುಷ್ಯನೇ, ಅಂಥವುಗಳನ್ನು ನಡೆಸುವವರ ಮೇಲೆ ತೀರ್ಪುಮಾಡುತ್ತಿರುವ ನೀನು ದೇವರ ತೀರ್ಪಿನಿಂದ ತಪ್ಪಿಸಿಕೊಂಡೇನೆಂದು ನೆನಸುತ್ತೀಯೋ?</verse>
				<verse number="4">ದೇವರ ದಯೆ, ಐಶ್ವರ್ಯ, ಸಹನೆ ಮತ್ತು ದೀರ್ಘಶಾಂತಿ ಇವುಗಳನ್ನು ತಾತ್ಸಾರ ಮಾಡುತ್ತೀಯೋ? ದೇವರ ಒಳ್ಳೆಯತನವು ನಿನ್ನನ್ನು ಪಶ್ಚಾತ್ತಾಪಕ್ಕೆ ನಡೆಸುತ್ತದೆಂಬುದು ನಿನಗೆ ತಿಳಿಯದೋ?</verse>
				<verse number="5">ನೀನು ನಿನ್ನ ಕಠಿಣವಾದ ಮತ್ತು ಪಶ್ಚಾತ್ತಾಪ ಪಡದ ಹೃದಯದಿಂದ, ನಿನಗೋಸ್ಕರ ದೇವರ ನೀತಿಯುಳ್ಳ ತೀರ್ಪು ಪ್ರಕಟವಾಗುವ ಕೋಪದ ದಿನಕ್ಕಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಿದ್ದಿ.</verse>
				<verse number="6">ದೇವರು, “ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲ ಕೊಡುವರು.”</verse>
				<verse number="7">ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು.</verse>
				<verse number="8">ಯಾರು ಸ್ವಾರ್ಥಿಗಳಾಗಿದ್ದು ಸತ್ಯವನ್ನು ಅನುಸರಿಸದೆ ಅನೀತಿಯನ್ನು ಅನುಸರಿಸುತ್ತಾರೋ ಅವರ ವಿರುದ್ಧ ದೇವರಿಗೆ ಕೋಪವೂ ಆಕ್ರೋಶವೂ ಬರುತ್ತವೆ.</verse>
				<verse number="9">ಕೆಟ್ಟದ್ದನ್ನು ನಡೆಸುವ ಪ್ರತಿ ಮನುಷ್ಯನಿಗೆ ಕಷ್ಟವೂ ಸಂಕಟವೂ ಬರುತ್ತವೆ, ಯೆಹೂದ್ಯರಿಗೆ ಮೊದಲು, ಅನಂತರ ಯೆಹೂದ್ಯರಲ್ಲದವರಿಗೂ ಸಹ.</verse>
				<verse number="10">ಆದರೆ ಒಳ್ಳೆಯದನ್ನು ನಡೆಸುವ ಪ್ರತಿಯೊಬ್ಬನಿಗೆ ಮಹಿಮೆಯೂ ಗೌರವವೂ ಸಮಾಧಾನವೂ ಉಂಟಾಗುತ್ತವೆ. ಯೆಹೂದ್ಯರಿಗೆ ಮೊದಲು, ಅನಂತರ ಯೆಹೂದ್ಯರಲ್ಲದವರಿಗೂ ಸಹ.</verse>
				<verse number="11">ದೇವರಲ್ಲಿ ಪಕ್ಷಪಾತವಿಲ್ಲ.</verse>
				<verse number="12">ನಿಯಮವಿಲ್ಲದವರಾಗಿ ಪಾಪಮಾಡಿದವರು ನಿಯಮವಿಲ್ಲದೆಯೇ ನಾಶಹೊಂದುವರು. ನಿಯಮಕ್ಕೆ ಅಧೀನರಾಗಿದ್ದು ಪಾಪಮಾಡಿದವರು ನಿಯಮದ ಮೂಲಕವಾಗಿ ತೀರ್ಪನ್ನು ಹೊಂದುವರು.</verse>
				<verse number="13">ಯಾರೂ ನಿಯಮವನ್ನು ಕೇಳಿದ ಮಾತ್ರಕ್ಕೆ ದೇವರ ಮುಂದೆ ನೀತಿವಂತರಾಗುವುದಿಲ್ಲ. ಆದರೆ ನಿಯಮಕ್ಕೆ ವಿಧೇಯರಾಗುವವರೇ ನೀತಿವಂತರಾಗುವರು.</verse>
				<verse number="14">ನಿಯಮವಿಲ್ಲದ ಯೆಹೂದ್ಯರಲ್ಲದವರು ಸ್ವಾಭಾವಿಕವಾಗಿ ನಿಯಮದಲ್ಲಿ ಹೇಳಿದಂತೆ ನಡೆಯುವಾಗ ಅವರಿಗೆ ನಿಯಮವಿಲ್ಲದಿದ್ದರೂ ಅವರ ಅಂತರಂಗವೇ ನಿಯಮವಾಗಿದೆ.</verse>
				<verse number="15">ಅವರು ತಮ್ಮ ನಡತೆಯಿಂದಲೇ ನಿಯಮವು ತಮ್ಮ ಹೃದಯದಲ್ಲಿ ಬರೆದಿದೆ ಎಂಬುದನ್ನು ತೋರಿಸುತ್ತಾರೆ. ಇದಕ್ಕೆ ಅವರ ಮನಸ್ಸು ಸಾಕ್ಷಿಕೊಡುತ್ತದೆ. ಅವರ ಯೋಚನೆಗಳು ಒಂದಕ್ಕೊಂದು ಇದು ತಪ್ಪು ಅಥವಾ ತಪ್ಪಲ್ಲ ಎಂಬುದನ್ನು ಸೂಚಿಸುತ್ತವೆ.</verse>
				<verse number="16">ನಾನು ಸಾರುವ ಸುವಾರ್ತೆಯ ಪ್ರಕಾರ ದೇವರು ಕ್ರಿಸ್ತ ಯೇಸುವಿನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ವಿಚಾರಿಸುವ ದಿನದಲ್ಲಿ ಇವೆಲ್ಲಾ ಸಂಭವಿಸುವುದು.</verse>
				<verse number="17">ಆದರೆ, ನೀನು ಯೆಹೂದ್ಯನೆನಿಸಿಕೊಂಡವನೂ ನಿಯಮದಲ್ಲಿ ಭರವಸೆಯಿಟ್ಟವನೂ ದೇವರಿಗೆ ಸೇರಿದವನೂ</verse>
				<verse number="18">ದೇವರ ಚಿತ್ತವನ್ನು ಬಲ್ಲವನೂ ನಿಯಮದಿಂದ ಉಪದೇಶವನ್ನು ಹೊಂದಿ ಯಾವುದು ಉತ್ತಮವಾದದ್ದೆಂದು ಅನುಮೋದಿಸುವವನೂ ಆಗಿದ್ದೀ.</verse>
				<verse number="19">ನಿನಗೆ ನಿಯಮದ ಜ್ಞಾನ ಮತ್ತು ಸತ್ಯವು ಇರುವುದರಿಂದ ನೀನು ಕುರುಡರಿಗೆ ಮಾರ್ಗದರ್ಶಿಯೂ ಕತ್ತಲೆಯಲ್ಲಿರುವವರಿಗೆ ಬೆಳಕೂ</verse>
				<verse number="20">ತಿಳುವಳಿಕೆಯಿಲ್ಲದವರಿಗೆ ಶಿಕ್ಷಕನೂ ಬಾಲಕರಿಗೆ ಉಪಾಧ್ಯಾಯನೂ ಆಗಿದ್ದೀಯೆಂದು ಧೈರ್ಯವಾಗಿದ್ದೀಯಲ್ಲಾ?</verse>
				<verse number="21">ಇತರರಿಗೆ ಉಪದೇಶಿಸುವ ನೀನು, ನಿನಗೆ ನೀನೇ ಉಪದೇಶ ಮಾಡಿಕೋ. ಕದಿಯಬಾರದೆಂದು ಸಾರುವ ನೀನು ಕದಿಯುತ್ತೀಯೋ?</verse>
				<verse number="22">ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳಲ್ಲಿ ಅಸಹ್ಯಪಡುವ ನೀನು ದೇವಾಲಯಗಳನ್ನು ದೋಚುತ್ತೀಯೋ?</verse>
				<verse number="23">ನಿಯಮದ ಬಗ್ಗೆ ಹೆಚ್ಚಳ ಪಡುವ ನೀನು ನಿಯಮವನ್ನು ಮೀರಿ ನಡೆದು ದೇವರನ್ನು ಅವಮಾನ ಪಡಿಸುತ್ತೀಯೋ?</verse>
				<verse number="24">ಪವಿತ್ರ ವೇದದಲ್ಲಿ ಬರೆದಿರುವಂತೆ, “ನಿಮ್ಮ ದೆಸೆಯಿಂದ ಯೆಹೂದ್ಯರಲ್ಲದವರಲ್ಲಿ ದೇವರ ನಾಮವು ದೂಷಣೆಗೆ ಗುರಿಯಾಗುತ್ತಿದೆ.”</verse>
				<verse number="25">ನೀನು ನಿಯಮವನ್ನು ಕೈಕೊಳ್ಳುವವನಾದರೆ, ಸುನ್ನತಿ ಪ್ರಯೋಜನಕರವಾಗಿರುವುದು. ಆದರೆ ನೀನು ನಿಯಮವನ್ನು ಮೀರಿ ನಡೆಯುವವನಾದರೆ, ನಿನಗೆ ಸುನ್ನತಿಯಾಗಿದ್ದರೂ ಇಲ್ಲದಂತಾಗಿರುವುದು.</verse>
				<verse number="26">ಸುನ್ನತಿಯಿಲ್ಲದವನು ನಿಯಮಗಳನ್ನು ಕೈಗೊಳ್ಳುವವರೆಗೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸುವುದಿಲ್ಲವೇ?</verse>
				<verse number="27">ಅವನು ಶಾರೀರಿಕವಾಗಿ ಸುನ್ನತಿಯಿಲ್ಲದವನಾಗಿದ್ದರೂ ನಿಯಮವನ್ನು ಅನುಸರಿಸುವುದರಿಂದ ಲಿಖಿತ ನಿಯಮವೂ ಸುನ್ನತಿಯೂ ಇದ್ದು ನಿಯಮವನ್ನು ಮೀರಿ ನಡೆಯುವ ನಿನ್ನನ್ನು ದೋಷಿಯೆಂದು ತೀರ್ಪು ಮಾಡುವನಲ್ಲವೇ?</verse>
				<verse number="28">ಹೊರಗೆ ಮಾತ್ರ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ. ಹೊರಗೆ ಶರೀರದಲ್ಲಿ ಮಾತ್ರ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.</verse>
				<verse number="29">ಆದರೆ, ಆಂತರ್ಯದಲ್ಲಿ ಯೆಹೂದ್ಯನಾಗಿರುವವನೇ ಯೆಹೂದ್ಯನು. ಹಾಗೆಯೇ ಸುನ್ನತಿಯು ಆತ್ಮನಿಂದ ಹೃದಯದಲ್ಲಿ ಆಗುವಂಥದ್ದಾಗಿದೆ. ಇದು ಲಿಖಿತ ನಿಯಮದಿಂದ ಆಗುವಂಥದಲ್ಲ. ಅಂಥವನಿಗೆ ಮೆಚ್ಚುಗೆಯು ಮನುಷ್ಯರಿಂದ ಬರುವಂಥದಲ್ಲ, ದೇವರಿಂದಲೇ ಬರುವಂಥದ್ದಾಗಿದೆ.</verse>
			</chapter>
			<chapter number="3">
				<verse number="1">ಹಾಗಾದರೆ ಯೆಹೂದ್ಯರಾಗಿರುವುದರಿಂದ ಪ್ರಯೋಜನವೇನು? ಅಥವಾ ಸುನ್ನತಿಯಿಂದ ಲಾಭವೇನು?</verse>
				<verse number="2">ಎಲ್ಲಾ ವಿಷಯಗಳಲ್ಲಿಯೂ ಬಹಳ ಪ್ರಯೋಜನವಿದೆ. ಮೊದಲನೆಯದಾಗಿ ದೇವರ ವಾಕ್ಯಗಳು ಯೆಹೂದ್ಯರ ವಶಕ್ಕೆ ಒಪ್ಪಿಸಲಾಗಿವೆ.</verse>
				<verse number="3">ಅವರಲ್ಲಿ ಕೆಲವರು ನಂಬದೆ ಹೋಗಿದ್ದರೇನು? ಅವರ ಅಪನಂಬಿಕೆಯು ದೇವರ ಪ್ರಾಮಾಣಿಕತೆಯನ್ನು ರದ್ದುಗೊಳಿಸುವುದೇ?</verse>
				<verse number="4">ಎಂದಿಗೂ ಹಾಗೆ ಆಗದಿರಲಿ. ಆದರೆ ಪ್ರತಿ ಮನುಷ್ಯನು ಸುಳ್ಳುಗಾರನಾದರೂ ದೇವರು ಸತ್ಯವಂತರೇ. ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ನೀನು ನಿನ್ನ ಮಾತುಗಳಲ್ಲಿಯೇ ನೀತಿವಂತನೆಂದು ನಿರ್ಣಯಿಸಲಾಗುವೆ. ನಿನ್ನ ಮೇಲೆ ತೀರ್ಪು ಮಾಡುವಾಗ ನೀನು ಜಯಿಸಬೇಕು.”</verse>
				<verse number="5">ಹೀಗೆ ನಮ್ಮ ಅನೀತಿಯೂ ದೇವರ ನೀತಿಯನ್ನು ಪ್ರಸಿದ್ಧಿಗೆ ತರುವುದಾದರೆ, ಕೋಪವನ್ನು ಸುರಿಸುವ ದೇವರು ಅನ್ಯಾಯಗಾರರೇನು? ನಾನು ಮಾನವ ರೀತಿಯಲ್ಲಿ ಮಾತನಾಡಿದ್ದೇನೆ.</verse>
				<verse number="6">ಎಂದಿಗೂ ಹಾಗೆ ಆಗದಿರಲಿ. ದೇವರು ಅನ್ಯಾಯಗಾರರಾಗಿದ್ದರೆ ಲೋಕಕ್ಕೆ ನ್ಯಾಯತೀರಿಸುವುದು ಹೇಗೆ?</verse>
				<verse number="7">“ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೊಂಡು ಅವರ ಮಹಿಮೆಯನ್ನು ಹೆಚ್ಚಿಸುವುದಾದರೆ ನನಗೆ ಪಾಪಿಯೆಂದು ಇನ್ನು ತೀರ್ಪಾಗುವುದು ಏಕೆ?”</verse>
				<verse number="8">“ಒಳ್ಳೆಯದಾಗುವಂತೆ ಕೆಟ್ಟದ್ದನ್ನು ಮಾಡೋಣ,” ಎಂದು ನಾವು ಹೇಳುತ್ತಿರುವುದಾಗಿ, ಕೆಲವರು ನಮ್ಮ ಬಗ್ಗೆ ದೂಷಿಸಿ ಹೇಳುವ ಪ್ರಕಾರ ನಾವೇಕೆ ಹೇಳಬಾರದು? ಅಂಥವರಿಗೆ ದಂಡನೆಯ ತೀರ್ಪಾಗುವುದು ನ್ಯಾಯವೇ!</verse>
				<verse number="9">ಹಾಗಾದರೆ ಏನು? ಯೆಹೂದ್ಯರಾದ ನಾವು ಯೆಹೂದ್ಯರಲ್ಲದವರಿಗಿಂತಲೂ ಶ್ರೇಷ್ಠರೋ? ಎಂದಿಗೂ ಇಲ್ಲವಲ್ಲ. ಯೆಹೂದ್ಯರಾಗಲಿ, ಯೆಹೂದ್ಯರಲ್ಲದವರಾಗಲಿ ಎಲ್ಲರೂ ಪಾಪದ ಶಕ್ತಿಗೆ ಒಳಗಾದವರೆಂದು ನಾವು ಈಗಾಗಲೇ ತೋರಿಸಿದ್ದೇವೆ.</verse>
				<verse number="10">ಪವಿತ್ರ ವೇದಗಳಲ್ಲಿ ಬರೆದಿರುವಂತೆ: “ನೀತಿವಂತನು ಇಲ್ಲ, ಒಬ್ಬನೂ ಇಲ್ಲ.</verse>
				<verse number="11">ಅರ್ಥಮಾಡಿಕೊಳ್ಳುವವನು ಒಬ್ಬನೂ ಇಲ್ಲ. ದೇವರನ್ನು ಹುಡುಕುವವನು ಒಬ್ಬನೂ ಇಲ್ಲ.</verse>
				<verse number="12">ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, ಎಲ್ಲರೂ ಕೆಲಸಕ್ಕೆ ಬಾರದವರಾಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ ಒಬ್ಬನಾದರೂ ಇಲ್ಲ.”</verse>
				<verse number="13">“ಅವರ ಗಂಟಲುಗಳು ತೆರೆದ ಸಮಾಧಿಗಳು. ಅವರ ನಾಲಿಗೆಯು ವಂಚನೆಯನ್ನು ನುಡಿಯುತ್ತದೆ.” “ಅವರ ತುಟಿಗಳಲ್ಲಿ ಹಾವಿನ ವಿಷವಿದೆ.”</verse>
				<verse number="14">“ಅವರ ಬಾಯಿ ಶಾಪದಿಂದಲೂ ಕಹಿಯಿಂದಲೂ ತುಂಬಿರುತ್ತವೆ.”</verse>
				<verse number="15">“ಅವರ ಕಾಲುಗಳು ರಕ್ತಪಾತಕ್ಕೆ ಆತುರಗೊಂಡಿವೆ.</verse>
				<verse number="16">ನಾಶ, ಸಂಕಟಗಳು ಅವರ ಮಾರ್ಗಗಳಲ್ಲಿ ಹಿಂಬಾಲಿಸುತ್ತವೆ.</verse>
				<verse number="17">ಸಮಾಧಾನದ ಮಾರ್ಗವನ್ನೇ ಅವರು ಅರಿಯರು.”</verse>
				<verse number="18">“ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ.”</verse>
				<verse number="19">ನಿಯಮವು ಏನೇ ಹೇಳುವುದಾದರೂ ಅದು ನಿಯಮಕ್ಕೆ ಒಳಪಟ್ಟಿರುವವರಿಗೇ ಅನ್ವಯವಾಗುವುದೆಂದು ನಾವು ಬಲ್ಲೆವು. ಹೀಗೆ ಎಲ್ಲರ ಬಾಯಿ ಮುಚ್ಚಿಹೋಗುವುದು ಮತ್ತು ಲೋಕವೆಲ್ಲಾ ದೇವರ ತೀರ್ಪಿಗೆ ಒಳಗಾಗಿರುವುದು.</verse>
				<verse number="20">ಆದ್ದರಿಂದ ಯಾರೂ ದೇವರ ದೃಷ್ಟಿಯಲ್ಲಿ ನಿಯಮದ ಕೃತ್ಯಗಳಿಂದ ನೀತಿವಂತರೆಂದು ನಿರ್ಣಯಿಸಲಾಗುವುದಿಲ್ಲ. ನಿಯಮದಿಂದ ಪಾಪದ ಪ್ರಜ್ಞೆ ಉಂಟಾಗುತ್ತದಷ್ಟೆ.</verse>
				<verse number="21">ಆದರೆ ಈಗ ನಿಯಮವಿಲ್ಲದೆ ದೇವರ ನೀತಿಯು ಪ್ರಕಟವಾಗಿದೆ. ಅದಕ್ಕೆ ನಿಯಮವೂ ಪ್ರವಾದಿಗಳೂ ಸಾಕ್ಷಿಕೊಡುತ್ತಾರೆ.</verse>
				<verse number="22">ದೇವರ ನೀತಿಯು ನಂಬುವವರೆಲ್ಲರಿಗೆ ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಡುವುದರ ಮೂಲಕ ಲಭಿಸುತ್ತದೆ. ಇಲ್ಲಿ ಯಾವ ಭೇದವೂ ಇರುವುದಿಲ್ಲ.</verse>
				<verse number="23">ಏಕೆಂದರೆ ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ.</verse>
				<verse number="24">ಆದರೆ ಕ್ರಿಸ್ತ ಯೇಸುವಿನಲ್ಲಿ ಬಂದ ವಿಮೋಚನೆಯ ಮೂಲಕ ಅವರು ದೇವರ ಕೃಪೆಯಿಂದ ಉಚಿತವಾಗಿ ನೀತಿವಂತರೆಂದು ನಿರ್ಣಯ ಹೊಂದುತ್ತಾರೆ.</verse>
				<verse number="25">ಇದನ್ನು ನಂಬಿಕೆಯಿಂದ ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೊರಕುವಂತೆ ದೇವರು ಕ್ರಿಸ್ತ ಯೇಸುವನ್ನು ನಮಗಾಗಿ ಪ್ರಾಯಶ್ಚಿತ್ತ ಬಲಿಯಾಗಿ ಒಪ್ಪಿಸಿದರು. ದೇವರು ಹಿಂದಿನ ಕಾಲದಲ್ಲಿ ಜನರು ಮಾಡಿರುವ ಪಾಪಗಳನ್ನು ದಂಡಿಸದೆ ತಮ್ಮ ನೀತಿಯನ್ನು ತೋರಿಸಿಕೊಡುವುದಕ್ಕಾಗಿಯೂ</verse>
				<verse number="26">ಈಗಿನ ಕಾಲದಲ್ಲಿ ದೇವರು ತಮ್ಮ ನೀತಿಯನ್ನು ತೋರ್ಪಡಿಸಲೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕಾಗಿಯೂ ದೀರ್ಘಶಾಂತರಾಗಿದ್ದಾರೆ.</verse>
				<verse number="27">ಹಾಗಾದರೆ, ನಾವು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವೆಲ್ಲಿ? ಆಸ್ಪದವೇ ಇಲ್ಲ. ನೀತಿವಂತರೆಂಬ ನಿರ್ಣಯ ನಿಯಮದಿಂದಲೋ? ಕ್ರಿಯೆಗಳಿಂದಲೋ? ಇಲ್ಲ, ಅದು ಇಲ್ಲದೆ ಹೋಯಿತು. ಅದು ನಂಬಿಕೆಯ ನಿಯಮದಿಂದಲೇ.</verse>
				<verse number="28">ಏಕೆಂದರೆ ನಿಯಮವನ್ನು ಕೈಕೊಳ್ಳುವುದರಿಂದಲೇ. ನಂಬಿಕೆಯಿಂದಲೇ ಒಬ್ಬ ಮನುಷ್ಯನು ನೀತಿವಂತನೆಂದು ನಿರ್ಣಯ ಹೊಂದುತ್ತಾನೆಂದು ಎಣಿಸುತ್ತೇವೆ.</verse>
				<verse number="29">ದೇವರು ಯೆಹೂದ್ಯರಿಗೆ ಮಾತ್ರ ದೇವರೋ? ದೇವರು ಯೆಹೂದ್ಯರಲ್ಲದವರಿಗೂ ಸಹ ದೇವರಾಗಿರುವುದಿಲ್ಲವೋ? ಹೌದು, ಯೆಹೂದ್ಯರಲ್ಲದವರಿಗೂ ಸಹ ದೇವರಾಗಿದ್ದಾರೆ.</verse>
				<verse number="30">ಸುನ್ನತಿಯವರಿಗೂ ಸುನ್ನತಿಯಿಲ್ಲದವರಿಗೂ ಒಂದೇ ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸುವುದಕ್ಕೆ ಒಬ್ಬರೇ ದೇವರಿದ್ದಾರೆ.</verse>
				<verse number="31">ಹಾಗಾದರೆ, ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸುವುದಕ್ಕೆ ಒಬ್ಬರೇ ದೇವರಿದ್ದಾರೆ. ಹಾಗಾದರೆ, ನಾವು ನಂಬಿಕೆಯ ಮೂಲಕ ನಿಯಮವನ್ನು ನಿರರ್ಥಕಗೊಳಿಸುತ್ತೇವೋ? ಎಂದಿಗೂ ಇಲ್ಲ. ನಾವು ನಿಯಮವನ್ನು ಸ್ಥಿರಪಡಿಸುತ್ತೇವಷ್ಟೇ.</verse>
			</chapter>
			<chapter number="4">
				<verse number="1">ಹಾಗಾದರೆ ವಂಶಾನುಕ್ರಮವಾಗಿ ನಮ್ಮ ಮೂಲ ಪಿತೃವಾಗಿರುವ ಅಬ್ರಹಾಮನು, ಈ ವಿಷಯದಲ್ಲಿ ಏನು ಕಂಡುಕೊಂಡನೆಂದು ಹೇಳಬೇಕು?</verse>
				<verse number="2">ಅಬ್ರಹಾಮನು ಕ್ರಿಯೆಗಳ ಮೂಲಕ ನೀತಿವಂತನೆಂದು ನಿರ್ಣಯ ಹೊಂದಿದವನಾಗಿದ್ದರೆ, ದೇವರ ಮುಂದೆ ಹೊಗಳಿಸಿಕೊಳ್ಳಲು ಅವನಿಗೆ ಆಸ್ಪದ ಇರುವುದಿಲ್ಲ.</verse>
				<verse number="3">ಏಕೆಂದರೆ ಪವಿತ್ರ ವೇದವು: “ಅಬ್ರಹಾಮನು ದೇವರನ್ನು ನಂಬಿದನು, ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,” ಎಂದು ಹೇಳುತ್ತದೆ.</verse>
				<verse number="4">ಕೆಲಸ ಮಾಡಿದವನಿಗೆ ದೊರೆಯುವ ಕೂಲಿಯು, ಉಚಿತ ದಾನವಲ್ಲ ಅದು ಅವನ ದುಡಿದ ಸಂಪಾದನೆ.</verse>
				<verse number="5">ಆದರೆ ಯಾರು ಕೃತ್ಯಗಳನ್ನು ಮಾಡದೆ, ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವ ದೇವರಲ್ಲಿ ನಂಬಿಕೆ ಇಡುತ್ತಾರೋ ಅವರ ನಂಬಿಕೆಯೇ ನೀತಿ ಎಂದು ಎಣಿಸಲಾಗುವುದು.</verse>
				<verse number="6">ದೇವರು ಯಾರನ್ನು ಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾರೋ ಅವನೇ ಧನ್ಯನು. ಇದರ ಬಗ್ಗೆ ದಾವೀದನು ಹೀಗೆ ಹೇಳುತ್ತಾನೆ:</verse>
				<verse number="7">“ಯಾರ ಅಪರಾಧಗಳು ಕ್ಷಮಿಸಲಾಗಿವೆಯೋ, ಯಾರ ಪಾಪಗಳು ಮುಚ್ಚಲಾಗಿವೆಯೋ ಅವರೇ ಧನ್ಯರು.</verse>
				<verse number="8">ಯಾರ ಪಾಪಗಳನ್ನು ಕರ್ತನು ಅವರ ಲೆಕ್ಕಕ್ಕೆ ಎಣಿಸುವುದಿಲ್ಲವೋ, ಆ ಮನುಷ್ಯನು ಧನ್ಯನು.”</verse>
				<verse number="9">ಈ ಧನ್ಯತೆಯು ಕೇವಲ ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೂ ಇರುತ್ತದೆಯೋ? ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿ ಎಂದು ಎಣಿಸಲಾಗಿತೆಂದು ಹೇಳುತ್ತೇವಲ್ಲಾ.</verse>
				<verse number="10">ಅದು ಯಾವಾಗ ಎಣಿಸಲಾಯಿತು? ಅವನಿಗೆ ಸುನ್ನತಿ ಆದ ಬಳಿಕವೋ? ಅಥವಾ ಸುನ್ನತಿಯಾಗುವುದಕ್ಕೆ ಮೊದಲೋ? ಅದು ನಂತರವಲ್ಲ, ಮೊದಲೇ!</verse>
				<verse number="11">ಹೌದು, ಸುನ್ನತಿಯಾಗುವ ಮೊದಲೇ ಅಬ್ರಹಾಮನಿಗಿದ್ದ ನಂಬಿಕೆಯಿಂದ ಅವನು ನೀತಿಯ ಮುದ್ರೆಯನ್ನು ಹೊಂದಿದನು. ಹೀಗಿರುವಲ್ಲಿ, ಸುನ್ನತಿಯಿಲ್ಲದೆ ನಂಬುವವರೆಲ್ಲರಿಗೂ ಅಬ್ರಹಾಮನು ತಂದೆಯಾಗಿರುತ್ತಾನೆ. ಹೀಗೆ ಅವರಿಗೆ ನೀತಿಯು ಎಣಿಕೆಯಾಗುವುದು.</verse>
				<verse number="12">ನಮ್ಮ ಪಿತೃವಾದ ಅಬ್ರಹಾಮನು ಸುನ್ನತಿ ಹೊಂದಿದವರಿಗೆ ಮಾತ್ರವೇ ತಂದೆಯಾಗಿರದೆ ಅವನಿಗೆ ಸುನ್ನತಿ ಆಗುವ ಮೊದಲು ಇದ್ದ ನಂಬಿಕೆಯ ಹೆಜ್ಜೆಯಲ್ಲಿ ನಡೆಯುವವರಿಗೂ ತಂದೆಯಾಗಿರುತ್ತಾನೆ.</verse>
				<verse number="13">ಅಬ್ರಹಾಮನು ಮತ್ತು ಅವನ ಸಂತತಿಯವರು ಜಗತ್ತಿಗೇ ಹಕ್ಕುದಾರರಾಗುವರೆಂಬ ವಾಗ್ದಾನವು ನಿಯಮದಿಂದ ಆದದ್ದಲ್ಲ. ನಂಬಿಕೆಯಿಂದುಂಟಾದ ನೀತಿಯ ಮೂಲಕವೇ ಬರುವಂಥದ್ದಾಗಿದೆ.</verse>
				<verse number="14">ನಿಯಮಕ್ಕೆ ಒಳಗಾಗುವವರೇ ಬಾಧ್ಯರಾದರೆ, ನಂಬಿಕೆಗೆ ಬೆಲೆಯಿಲ್ಲದಂತಾಯಿತು. ವಾಗ್ದಾನವೂ ನಿರರ್ಥಕ.</verse>
				<verse number="15">ನಿಯಮವು ದೇವರ ಕೋಪವನ್ನು ತರುತ್ತದೆ. ಎಲ್ಲಿ ನಿಯಮವು ಇರುವುದಿಲ್ಲವೋ ಅಲ್ಲಿ ಅದರ ಉಲ್ಲಂಘನೆಯೂ ಇರುವುದಿಲ್ಲ.</verse>
				<verse number="16">ಆದ್ದರಿಂದ ಆ ಬಾಧ್ಯತೆಯು ಕೃಪೆಯಿಂದಲೇ, ನಂಬಿಕೆಯ ಮೂಲಕ ದೊರಕುತ್ತದೆ. ಈ ವಾಗ್ದಾನವು ನಿಯಮದ ಸಂತತಿಯವರಿಗೆ ಮಾತ್ರವಲ್ಲ ಅಬ್ರಹಾಮನಲ್ಲಿ ಇದ್ದ ನಂಬಿಕೆ ಇರುವವರ ಸಂತತಿಯವರೆಲ್ಲರಿಗೂ ಶಾಶ್ವತವಾಗಿ ದೊರಕುವುದು. ಏಕೆಂದರೆ ಅವನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.</verse>
				<verse number="17">“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಒಬ್ಬ ತಂದೆಯನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರ ವೇದದಲ್ಲಿ ಲಿಖಿತವಾಗಿದೆ. ದೇವರು ಸತ್ತವರಿಗೆ ಜೀವಕೊಡುವವರೂ ಇಲ್ಲದವುಗಳನ್ನು ಇರುವವುಗಳೋ ಎಂಬಂತೆ ಕರೆಯುವವರೂ ಆಗಿರುತ್ತಾರೆಂದು ಅಬ್ರಹಾಮನು ದೇವರ ಸನ್ನಿಧಿಯಲ್ಲಿ ನಂಬಿದನು.</verse>
				<verse number="18">ಅವನು ತನಗೆ ದೇವರಿಂದ ಹೇಳಲಾದ ನಿರೀಕ್ಷೆಗೆ ಯಾವ ಆಸ್ಪದವು ಇಲ್ಲದಿರುವಾಗಲೂ ನಿರೀಕ್ಷೆಯಿಂದ ನಂಬಿ, “ನಿನ್ನ ಸಂತಾನವು ನಕ್ಷತ್ರಗಳಷ್ಟು ಇರುವುದು,” ಎಂಬ ಹೇಳಿಕೆಯಂತೆ ಅವನು ಅನೇಕ ಜನಾಂಗಗಳಿಗೆ ತಂದೆಯಾದನು.</verse>
				<verse number="19">ಅವನು ಆಗಲೇ ಸುಮಾರು ನೂರು ವರ್ಷದವನಾಗಿದ್ದು, ತನ್ನ ದೇಹವು ದುರ್ಬಲವಾಗಿದ್ದರೂ ಹೆಂಡತಿಯಾದ ಸಾರಳಿಗೆ ಗರ್ಭಧರಿಸುವ ಕಾಲ ಮುಗಿದು ಹೋಗಿದ್ದರೂ ನಂಬಿಕೆಯಲ್ಲಿ ಬಲಹೀನನಾಗಲಿಲ್ಲ.</verse>
				<verse number="20">ಅವನು ದೇವರು ಮಾಡಿದ ವಾಗ್ದಾನಕ್ಕೆ ವಿರುದ್ಧ ಅಪನಂಬಿಕೆಯಿಂದ ಚಂಚಲಚಿತ್ತನಾಗದೆ, ನಂಬಿಕೆಯಿಂದ ಶಕ್ತಿವಂತನಾಗಿ ದೇವರಿಗೆ ಮಹಿಮೆಯನ್ನು ಸಲ್ಲಿಸಿದನು.</verse>
				<verse number="21">ಅವನು ವಾಗ್ದಾನವನ್ನು ನೆರವೇರಿಸಲು ದೇವರು ಶಕ್ತರಾಗಿದ್ದಾರೆಂದು ಪೂರ್ಣ ದೃಢತೆಯುಳ್ಳವನಾದನು.</verse>
				<verse number="22">ಆದ್ದರಿಂದ, “ಅದು ಅವನ ಪಾಲಿಗೆ ನೀತಿ ಎಂಬುದಾಗಿ ಎಣಿಸಲಾಯಿತು.”</verse>
				<verse number="23">ಹೀಗೆ, “ಅವನ ಪಾಲಿಗೆ ನೀತಿ ಎಂದು ಎಣಿಸಲಾಯಿತು,” ಎಂದು ಬರೆದ ಮಾತು ಅವನಿಗೋಸ್ಕರ ಮಾತ್ರವೇ ಆಗಿರದೆ,</verse>
				<verse number="24">ನಮಗೋಸ್ಕರವೂ ಅಂದರೆ, ನಮ್ಮ ಕರ್ತ ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿರುವ ದೇವರನ್ನು ನಂಬುವ ನಮ್ಮ ಪಾಲಿಗೂ ನೀತಿಯೆಂದು ಎಣಿಸಲಾಗುವುದು.</verse>
				<verse number="25">ನಮ್ಮ ಪಾಪಗಳ ನಿಮಿತ್ತವಾಗಿ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು ಮತ್ತು ನಮ್ಮನ್ನು ನೀತಿವಂತರನ್ನಾಗಿ ನಿರ್ಣಯಿಸಲು, ಜೀವದಿಂದ ಎಬ್ಬಿಸಲಾಯಿತು.</verse>
			</chapter>
			<chapter number="5">
				<verse number="1">ಹೀಗಿರುವುದರಿಂದ, ವಿಶ್ವಾಸದ ಮೂಲಕ ನೀತಿವಂತರೆಂಬ ನಿರ್ಣಯ ಹೊಂದಿದ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿರುತ್ತದೆ.</verse>
				<verse number="2">ಯೇಸುವಿನ ಮೂಲಕವೇ ನಾವು ಈಗ ಈ ಕೃಪೆಯಲ್ಲಿ ವಿಶ್ವಾಸದಿಂದ ಪ್ರವೇಶಮಾಡಿದ್ದೇವೆ. ಈ ಕೃಪೆಯಲ್ಲಿಯೇ ಈಗ ನಿಂತಿದ್ದೇವೆ. ನಾವು ದೇವರ ಮಹಿಮೆಯಲ್ಲಿ ಪಾಲುಗೊಳ್ಳುತ್ತೆವೆಂಬ ನಿರೀಕ್ಷೆಯಲ್ಲಿ ಆನಂದಪಡುತ್ತೇವೆ.</verse>
				<verse number="3">ಅಷ್ಟು ಮಾತ್ರವೇ ಅಲ್ಲ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷ ಪಡುವವರಾಗಿರುತ್ತೇವೆ. ಏಕೆಂದರೆ ಕಷ್ಟಸಂಕಟವು ತಾಳ್ಮೆಯನ್ನು ಉಂಟುಮಾಡುತ್ತದೆಂದೂ</verse>
				<verse number="4">ತಾಳ್ಮೆಯು ಸದ್ಗುಣವನ್ನೂ ಸದ್ಗುಣವು ನಿರೀಕ್ಷೆಯನ್ನೂ ಉಂಟು ಮಾಡುತ್ತದೆಂದು ಬಲ್ಲೆವು.</verse>
				<verse number="5">ಈ ನಿರೀಕ್ಷೆಯು ನಮ್ಮನ್ನು ನಿರಾಶೆ ಪಡಿಸುವುದಿಲ್ಲ. ಏಕೆಂದರೆ ದೇವರು ನಮಗೆ ಅನುಗ್ರಹಿಸಿರುವ ಪವಿತ್ರಾತ್ಮ ಮೂಲಕ ನಮ್ಮ ಹೃದಯಗಳಲ್ಲಿ ತಮ್ಮ ಪ್ರೀತಿಯನ್ನು ಧಾರಾಳವಾಗಿ ಸುರಿಸಿದ್ದಾರೆ.</verse>
				<verse number="6">ನಾವು ಇನ್ನೂ ಬಲಹೀನರಾಗಿದ್ದಾಗಲೇ, ಸೂಕ್ತ ಸಮಯದಲ್ಲಿ ಕ್ರಿಸ್ತ ಯೇಸು ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟರು.</verse>
				<verse number="7">ನೀತಿವಂತನಿಗೋಸ್ಕರ ಯಾರಾದರೂ ಪ್ರಾಣಕೊಡುವುದು ಅಪರೂಪ. ಒಬ್ಬ ಸತ್ಪುರುಷನಿಗಾಗಿ ಯಾರಾದರೂ ಪ್ರಾಣಕೊಡುವುದಕ್ಕೆ ಧೈರ್ಯ ಮಾಡಬಹುದು.</verse>
				<verse number="8">ಆದರೆ ಕ್ರಿಸ್ತ ಯೇಸು ನಾವು ಇನ್ನೂ ಪಾಪಿಗಳಾಗಿದ್ದಾಗಲೇ ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ಇಟ್ಟಿರುವ ತಮ್ಮ ಪ್ರೀತಿಯನ್ನು ತೋರಿಸಿದ್ದಾರೆ.</verse>
				<verse number="9">ಈಗ ನಾವು ಕ್ರಿಸ್ತ ಯೇಸುವಿನ ರಕ್ತದಿಂದ ನೀತಿವಂತರೆಂದು ನಿರ್ಣಯ ಹೊಂದಿರುವುದರಿಂದ, ಕ್ರಿಸ್ತ ಯೇಸುವಿನ ಮೂಲಕವಾಗಿಯೇ ದೇವರ ಕೋಪದಿಂದ ರಕ್ಷಿಸಲಾಗುವುದು ಇನ್ನೂ ಖಂಡಿತವಲ್ಲವೆ?</verse>
				<verse number="10">ನಾವು ದೇವರ ಶತ್ರುಗಳಾಗಿದ್ದಾಗಲೇ ಅವರು ನಮ್ಮನ್ನು ತಮ್ಮ ಪುತ್ರನ ಮರಣದ ಮೂಲಕ ಸಂಧಾನ ಮಾಡಿಕೊಂಡಿರುವುದಾದರೆ, ಕ್ರಿಸ್ತ ಯೇಸುವಿನ ಜೀವದ ಮೂಲಕ ಎಷ್ಟೋ ಹೆಚ್ಚಾಗಿ ನಾವು ರಕ್ಷಿಸುವುದು ಇನ್ನೂ ಖಚಿತವಲ್ಲವೆ?</verse>
				<verse number="11">ಇಷ್ಟು ಮಾತ್ರವೇ ಅಲ್ಲ, ಈಗ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಾವು ದೇವರೊಂದಿಗೆ ಮಿತ್ರರಾಗಿ, ಯೇಸುವಿನ ಮೂಲಕವೇ ದೇವರಲ್ಲಿ ಉಲ್ಲಾಸ ಪಡುತ್ತೇವೆ.</verse>
				<verse number="12">ಆದ್ದರಿಂದ, ಒಬ್ಬ ಮನುಷ್ಯನ ಮೂಲಕ ಪಾಪವೂ ಪಾಪದ ಮೂಲಕ ಮರಣವೂ ಲೋಕದೊಳಗೆ ಪ್ರವೇಶಿಸಿದ ಹಾಗೆಯೇ ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಲ್ಲಿಯೂ ವ್ಯಾಪಿಸಿತು.</verse>
				<verse number="13">ನಿಯಮವು ಕೊಡುವುದಕ್ಕೆ ಮೊದಲೇ ಪಾಪವು ಲೋಕದಲ್ಲಿ ಇತ್ತು. ಆದರೆ ನಿಯಮವು ಇಲ್ಲದಿದ್ದಾಗ ಪಾಪವು ಲೆಕ್ಕಕ್ಕೆ ಬರುವುದಿಲ್ಲ.</verse>
				<verse number="14">ಆದರೂ ಮರಣವು ಆದಾಮನಿಂದ ಮೋಶೆಯವರೆಗೂ ದೊರೆತನ ಮಾಡುತ್ತಿತ್ತು. ಆದಾಮನು ಮಾಡಿದ ಅಪರಾಧಕ್ಕೆ ಸಮಾನವಾಗಿ ಪಾಪಮಾಡಿದವರ ಮೇಲೆಯೂ ಅದು ದೊರೆತನ ಮಾಡುತ್ತಿತ್ತು. ಆದಾಮನು ಮುಂದೆ ಬರಲಿಕ್ಕಿದ್ದ ಒಬ್ಬಾತನಿಗೆ ಸಂಕೇತವಾಗಿದ್ದಾನೆ.</verse>
				<verse number="15">ಆದರೆ ಆ ಅಪರಾಧಕ್ಕೂ ದೇವರ ವರಕ್ಕೂ ಬಹಳ ವ್ಯತ್ಯಾಸವಿದೆ. ಹೇಗೆಂದರೆ, ಆದಾಮನ ಅಪರಾಧದಿಂದ ಎಲ್ಲ ಮನುಷ್ಯರೂ ಸತ್ತರು. ಕ್ರಿಸ್ತ ಯೇಸುವೆಂಬ ಈ ಒಬ್ಬ ಮನುಷ್ಯನ ಕೃಪೆಯಿಂದ ಸಿಕ್ಕುವ ದೇವರ ಕೃಪೆಯ ವರವು ಅನೇಕರಿಗೆ ಇನ್ನೂ ಹೆಚ್ಚಾಗಿ ಸಿಕ್ಕುವುದು ನಿಶ್ಚಯವಲ್ಲವೇ?</verse>
				<verse number="16">ಇದಲ್ಲದೆ ಪಾಪಮಾಡಿದ ಒಬ್ಬನಿಂದಲೇ ದುಷ್ಪಲ ಬಂದಂತೆ ಈ ವರವು ಬರಲಿಲ್ಲ. ಹೇಗೆಂದರೆ, ಒಬ್ಬನೇ ಮನುಷ್ಯನ ಪಾಪದ ದೆಸೆಯಿಂದ ಸಾಯಬೇಕೆಂಬ ದಂಡನಾತೀರ್ಪು ಉಂಟಾಯಿತು. ಆದರೆ ದೇವರ ಕೃಪೆಯು ಅನೇಕರ ಅಪರಾಧಗಳಿಂದ ಅವರನ್ನು ನೀತಿವಂತರೆಂದು ನಿರ್ಣಯಿಸುವುದಾಗಿದೆ.</verse>
				<verse number="17">ಒಬ್ಬ ಮನುಷ್ಯನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ಮುಖಾಂತರ ಮರಣವು ಆಳುವುದಾದರೆ, ದೇವರ ಧಾರಾಳವಾದ ಕೃಪೆಯನ್ನೂ ನೀತಿಯ ವರವನ್ನೂ ಹೊಂದಿದವರಾಗಿ ಕ್ರಿಸ್ತ ಯೇಸುವೆಂಬ ಒಬ್ಬಾತನ ಮೂಲಕ ಜೀವದಲ್ಲಿ ಆಳುವುದು ಇನ್ನೂ ಹೆಚ್ಚಾದದ್ದಲ್ಲವೆ!</verse>
				<verse number="18">ಹೀಗೆ, ಒಂದು ಅಪರಾಧದ ನಿಮಿತ್ತ ಎಲ್ಲಾ ಜನರ ಮೇಲೆ ದಂಡನಾತೀರ್ಪು ಬಂದಂತೆಯೇ ಒಂದು ನೀತಿಯ ಕೃತ್ಯದಿಂದ ಎಲ್ಲಾ ಜನರಿಗೂ ಜೀವವನ್ನುಂಟು ಮಾಡುವ ನೀತಿಕರಣವು ಉಂಟಾಯಿತು.</verse>
				<verse number="19">ಒಬ್ಬ ಮನುಷ್ಯನ ಅವಿಧೇಯತೆಯಿಂದಾಗಿ ಅನೇಕರು, ಪಾಪಿಗಳು ಆದಂತೆಯೇ ಒಬ್ಬ ಮನುಷ್ಯನ ವಿಧೇಯತೆಯಿಂದಾಗಿ ಅನೇಕರು ನೀತಿವಂತರಾಗುವರು.</verse>
				<verse number="20">ಅಪರಾಧವು ಹೆಚ್ಚುವಂತೆ ನಿಯಮವು ಪ್ರವೇಶಿಸಿತು. ಆದರೆ ಪಾಪವು ಹೆಚ್ಚಾದಾಗ, ಕೃಪೆಯು ಇನ್ನೂ ಹೆಚ್ಚಾಯಿತು.</verse>
				<verse number="21">ಹೀಗೆ ಪಾಪವು ಮರಣದ ಮೂಲಕ ಆಳಿದಂತೆಯೇ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಿತ್ಯಜೀವವನ್ನುಂಟು ಮಾಡಲು ಕೃಪೆಯು ನೀತಿಯ ಮೂಲಕ ಆಳುವುದು.</verse>
			</chapter>
			<chapter number="6">
				<verse number="1">ಹಾಗಾದರೆ ನಾವು ಏನು ಹೇಳೋಣ? ಕೃಪೆಯು ಹೆಚ್ಚಾಗಲಿ ಎಂದು ನಾವು ಪಾಪದಲ್ಲಿ ಮುಂದುವರಿಯೋಣವೆ?</verse>
				<verse number="2">ಎಂದಿಗೂ ಹಾಗಾಗದಿರಲಿ! ನಾವು ಪಾಪದ ಪಾಲಿಗೆ ಸತ್ತೆವು, ನಾವು ಇನ್ನೂ ಪಾಪದಲ್ಲಿ ಜೀವಿಸುವುದು ಹೇಗೆ?</verse>
				<verse number="3">ಅಥವಾ ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುವ ನಾವು ಅವರ ಮರಣದಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುತ್ತೇವೆಂಬುದು ನಿಮಗೆ ತಿಳಿಯದೋ?</verse>
				<verse number="4">ಹೀಗಿರುವಲ್ಲಿ ಯೇಸುವಿರೊಂದಿಗೆ ದೀಕ್ಷಾಸ್ನಾನದ ಮೂಲಕ ಅವರ ಮರಣದಲ್ಲಿ ಹೂಣಲಾದೆವು. ಆದ್ದರಿಂದ ತಂದೆಯ ಮಹಿಮೆಯ ಮೂಲಕ ಕ್ರಿಸ್ತ ಯೇಸು ಸತ್ತವರೊಳಗಿಂದ ಎಬ್ಬಿಸಲಾದಂತೆಯೇ ನಾವು ಹೊಸ ಜೀವವನ್ನು ಜೀವಿಸಬೇಕು.</verse>
				<verse number="5">ನಾವು ಕ್ರಿಸ್ತ ಯೇಸುವಿನೊಂದಿಗೆ ಸೇರಿ ಅವರ ಮರಣದಲ್ಲಿ ಪಾಲುಗಾರರಾದರೆ, ಅವರ ಪುನರುತ್ಥಾನದಲ್ಲಿಯೂ ಪಾಲುಗಾರರಾಗುವೆವು.</verse>
				<verse number="6">ನಮ್ಮ ಪಾಪದ ಶರೀರವು ನಾಶವಾಗಿ ನಾವು ಇನ್ನು ಮುಂದೆ ಎಂದಿಗೂ ಪಾಪಕ್ಕೆ ಗುಲಾಮರಾಗದಂತೆ, ನಮ್ಮ ಹಳೆಯ ಮನುಷ್ಯ ಸ್ವಭಾವ ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಯಿತು ಎಂದು ನಾವು ಬಲ್ಲೆವು.</verse>
				<verse number="7">ಮರಣ ಹೊಂದಿರುವ ಯಾರೇ ಆದರೂ ಪಾಪದಿಂದ ಮುಕ್ತರಾಗಿರುತ್ತಾರೆ.</verse>
				<verse number="8">ನಾವು ಈಗ ಕ್ರಿಸ್ತ ಯೇಸುವಿನೊಂದಿಗೆ ಸತ್ತಿರುವುದಾದರೆ, ಅವರೊಂದಿಗೆ ಬದುಕುವೆವು ಎಂದು ನಂಬುತ್ತೇವೆ.</verse>
				<verse number="9">ಕ್ರಿಸ್ತ ಯೇಸು ಮರಣದಿಂದ ಜೀವಿತರಾಗಿ ಎದ್ದು ಬಂದದ್ದರಿಂದ ಅವರು ಪುನಃ ಸಾಯಲಾರರೆಂದು ಬಲ್ಲೆವು. ಇನ್ನು ಮುಂದೆ ಅವರ ಮೇಲೆ ಮರಣಕ್ಕೆ ಅಧಿಕಾರವಿಲ್ಲ.</verse>
				<verse number="10">ಕ್ರಿಸ್ತ ಯೇಸು ಪಾಪದ ಪಾಲಿಗೆ ಸತ್ತದ್ದೂ ಒಂದೇ ಸಾರಿಯಾಗಿರುತ್ತದೆ. ಆದರೆ, ಅವರು ಜೀವಿಸುವ ಜೀವಿತವು ದೇವರಿಗಾಗಿಯೇ.</verse>
				<verse number="11">ಅದೇ ರೀತಿಯಲ್ಲಿ, ನೀವೂ ಸಹ ಪಾಪದ ಪಾಲಿಗೆ ಸತ್ತವರೆಂದೂ ಕ್ರಿಸ್ತ ಯೇಸುವಿನಲ್ಲಿ ದೇವರಿಗಾಗಿ ಜೀವಿಸುವವರೆಂದೂ ಎಣಿಸಿಕೊಳ್ಳಿರಿ.</verse>
				<verse number="12">ಆದ್ದರಿಂದ ನೀವು ದೇಹದ ಆಶೆಗಳಿಗೆ ಒಳಗಾಗದಂತೆ ನಿಮ್ಮ ನಶ್ವರ ದೇಹಗಳಲ್ಲಿ ಪಾಪವು ಅಧಿಕಾರ ನಡೆಸಲು ಬಿಡಬೇಡಿರಿ.</verse>
				<verse number="13">ನಿಮ್ಮ ದೇಹದ ಅವಯವಗಳನ್ನು ಅನೀತಿಯನ್ನು ನಡೆಸುವ ಸಾಧನಗಳಾಗುವಂತೆ ಪಾಪಕ್ಕೆ ಒಪ್ಪಿಸಬೇಡಿರಿ. ಆದರೆ ಅದರ ಬದಲಾಗಿ ಮರಣದಿಂದ ಜೀವಕ್ಕೆ ಬಂದವರಂತೆ ನಿಮ್ಮನ್ನು ದೇವರಿಗೆ ಸಮರ್ಪಿಸಿಕೊಳ್ಳಿರಿ. ನಿಮ್ಮ ದೇಹದ ಅವಯವಗಳನ್ನು ನೀತಿಯ ಸಾಧನಗಳಾಗಿರುವುದಕ್ಕಾಗಿ ದೇವರಿಗೆ ಸಮರ್ಪಿಸಿರಿ.</verse>
				<verse number="14">ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ಏಕೆಂದರೆ ನೀವು ನಿಯಮಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.</verse>
				<verse number="15">ಹಾಗಾದರೆ ಏನು? ನಾವು ನಿಯಮಕ್ಕೆ ಅಧೀನರಾಗಿರದೆ ಕೃಪೆಗೆ ಅಧೀನರಾಗಿರುತ್ತೇವೆಂದು ಪಾಪ ಮಾಡಬಹುದೋ? ಎಂದಿಗೂ ಇಲ್ಲ!</verse>
				<verse number="16">ನೀವು ಯಾರಾದರೊಬ್ಬರಿಗೆ ವಿಧೇಯರಾಗಿರುವುದಕ್ಕಾಗಿ ಗುಲಾಮರಾಗಿ ನಿಮ್ಮನ್ನು ಒಪ್ಪಿಸಿಕೊಟ್ಟಾಗ, ನೀವು ಅವನಿಗೆ ವಿಧೇಯರಾದ ಗುಲಾಮರಾಗುತ್ತೀರಿ ಎಂಬುದು ನಿಮಗೆ ತಿಳಿಯದೋ? ಮರಣಕ್ಕೆ ನಡೆಸುವ ಪಾಪಕ್ಕೆ ನೀವು ಗುಲಾಮರಾಗಿರಬಹುದು ಇಲ್ಲವೆ ನೀತಿಗೆ ನಡೆಸುವ ವಿಧೇಯತೆಗೆ ಒಳಪಟ್ಟಿರಬಹುದು.</verse>
				<verse number="17">ಆದರೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಒಪ್ಪಿಸಿದ ಬೋಧನೆಗೆ ಹೃದಯದಿಂದ ವಿಧೇಯರಾದುದ್ದಕ್ಕಾಗಿ, ದೇವರಿಗೆ ಸ್ತೋತ್ರವಾಗಲಿ.</verse>
				<verse number="18">ಪಾಪದಿಂದ ಬಿಡುಗಡೆಹೊಂದಿ ನೀತಿಗೆ ಗುಲಾಮರಾಗಿದ್ದೀರಿ.</verse>
				<verse number="19">ನೀವು ಶರೀರಭಾವದಲ್ಲಿ ಬಲಹೀನರಾಗಿರುವುದರಿಂದ ನಾನು ಮಾನವ ಮಾತುಗಳಲ್ಲಿ ಇದನ್ನು ಹೇಳುತ್ತಿದ್ದೇನೆ. ನಿಮ್ಮ ದೇಹದ ಅವಯವಗಳನ್ನು ಅಶುದ್ಧತೆಗೂ ಅಧರ್ಮಕ್ಕೂ ದಾಸತ್ವದಲ್ಲಿ ಒಪ್ಪಿಸಿ ಕೊಡುತ್ತಿದ್ದಂತೆಯೇ ನೀವು ಈಗ ಅವುಗಳನ್ನು ಪರಿಶುದ್ಧತೆಗೆ ನಡೆಸುವ ನೀತಿಗೆ ಗುಲಾಮರಾಗಿ ಒಪ್ಪಿಸಿರಿ.</verse>
				<verse number="20">ನೀವು ಪಾಪಕ್ಕೆ ಗುಲಾಮರಾಗಿದ್ದಾಗ ನೀತಿಗೆ ಅಧೀನರಾಗಿರಲಿಲ್ಲ.</verse>
				<verse number="21">ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ!</verse>
				<verse number="22">ಆದರೆ ಈಗ ನೀವು ಪಾಪದಿಂದ ಬಿಡುಗಡೆ ಹೊಂದಿದವರಾಗಿ ದೇವರಿಗೆ ಗುಲಾಮರಾಗಿರುವುದರಿಂದ, ಪವಿತ್ರವಾಗಿರುವುದೇ ನಿಮಗೆ ದೊರಕುವ ಫಲವು. ಕಡೆಗೆ ದೊರೆಯುವಂಥದು ನಿತ್ಯಜೀವವಾಗಿರುತ್ತದೆ.</verse>
				<verse number="23">ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.</verse>
			</chapter>
			<chapter number="7">
				<verse number="1">ಪ್ರಿಯರೇ, ನಿಯಮವನ್ನು ತಿಳಿದವರಿಗೆ ನಾನು ಹೇಳುವುದೇನೆಂದರೆ, ಒಬ್ಬ ಮನುಷ್ಯನು ಜೀವದಿಂದಿರುವ ತನಕ ಮಾತ್ರ ನಿಯಮಕ್ಕೆ ಅವನ ಮೇಲೆ ಅಧಿಕಾರ ಇರುತ್ತದೆಂದು ನೀವು ಬಲ್ಲಿರಿ.</verse>
				<verse number="2">ಒಬ್ಬ ಮದುವೆಯಾದ ಹೆಣ್ಣು ಮಗಳು ಕಾನೂನಿಗನುಸಾರವಾಗಿ ಅವಳ ಪತಿಯು ಜೀವದಿಂದಿರುವ ತನಕ ಮಾತ್ರ ಅವನಿಗೆ ಬದ್ಧಳಾಗಿರುತ್ತಾಳೆ. ಆದರೆ ಪತಿಯು ಸತ್ತರೆ ಆಕೆಯು ಮದುವೆಯ ಕಾನೂನಿನಿಂದ ಬಿಡುಗಡೆ ಹೊಂದಿದವಳಾಗಿರುತ್ತಾಳೆ.</verse>
				<verse number="3">ಹೀಗಿರುವಾಗ, ಅವಳ ಪತಿಯು ಜೀವಂತನಾಗಿರುವಾಗ ಆಕೆಯು ಇನ್ನೊಬ್ಬನನ್ನು ಮದುವೆಯಾದರೆ ವ್ಯಭಿಚಾರಿಣಿ ಎಂದು ಎನಿಸಿಕೊಳ್ಳುವಳು. ಆದರೆ ಪತಿಯು ಸತ್ತರೆ, ಆಕೆಯು ಬೇರೊಬ್ಬನನ್ನು ಮದುವೆಯಾದರೂ ಆ ಕಾನೂನಿನಿಂದ ಅವಳು ಬಿಡುಗಡೆ ಆಗಿರಲಾಗಿ ವ್ಯಭಿಚಾರಿಣಿ ಎಂದು ಎನಿಸಿಕೊಳ್ಳುವುದಿಲ್ಲ.</verse>
				<verse number="4">ಆದ್ದರಿಂದ, ನನ್ನ ಪ್ರಿಯರೇ, ನೀವು ದೇವರಿಗೆ ಫಲಕೊಡುವವರಾಗಬೇಕೆಂದು ಸತ್ತವರೊಳಗಿಂದ ಎದ್ದುಬಂದಾತನಿಗೆ ಸೇರಿದವರಾಗಲು ಕ್ರಿಸ್ತ ಯೇಸುವಿನ ದೇಹದ ಮೂಲಕ ನಿಯಮದ ಪಾಲಿಗೆ ಸತ್ತಿರಿ.</verse>
				<verse number="5">ಮಾಂಸಭಾವಕ್ಕನುಸಾರವಾಗಿ ನಾವು ಜೀವಿಸುತ್ತಿದ್ದಾಗ, ನಿಯಮದಿಂದ ಉತ್ತೇಜನಗೊಂಡ ಪಾಪದ ದುರಾಶೆಗಳು ನಮ್ಮ ದೇಹದಲ್ಲಿ ಕಾರ್ಯ ನಡೆಸುತ್ತಿದ್ದವು. ಆದ್ದರಿಂದ ನಾವು ಮರಣಕ್ಕೆ ಫಲಗಳನ್ನು ಹುಟ್ಟಿಸುತ್ತಿದ್ದೆವು.</verse>
				<verse number="6">ಈಗಲಾದರೋ ಒಂದು ಕಾಲದಲ್ಲಿ ನಮ್ಮನ್ನು ಯಾವುದು ಬಂಧನದಲ್ಲಿರಿಸಿತ್ತೋ ಅದಕ್ಕೆ ಸತ್ತವರಾಗಿದ್ದು ನಿಯಮದಿಂದ ಬಿಡುಗಡೆ ಹೊಂದಿದವರಾಗಿರುತ್ತೇವೆ. ಹೀಗೆ ನಾವು ಲಿಖಿತವಾದ ಹಳೆಯ ನಿಯಮದಂತೆ ನಡೆಯದೆ ಆತ್ಮದಿಂದ ನವಜೀವನದಲ್ಲಿ ನಡೆಯುವರಾಗಿದ್ದೇವೆ.</verse>
				<verse number="7">ಹಾಗಾದರೆ ನಾವು ಏನು ಹೇಳೋಣ? ನಿಯಮವೇ ಪಾಪವಾಗಿದೆಯೋ? ಎಂದಿಗೂ ಇಲ್ಲ. ಆದರೂ ನಿಯಮವನ್ನು ಬಿಟ್ಟು ಬೇರಾವುದರ ಮೂಲಕವೂ ಪಾಪವೆಂದರೆ ಏನೆಂದು ನನಗೆ ತಿಳಿದುಕೊಳ್ಳಲು ಸಾಧ್ಯವಿರಲಿಲ್ಲ. ನಿಯಮವು, “ದುರಾಶೆ ಪಡಬೇಡ,” ಎಂದು ಹೇಳದೆ ಇರುತ್ತಿದ್ದರೆ ದುರಾಶೆ ಎಂದರೆ ಏನೆಂದು ನಾನು ತಿಳಿಯಲು ಸಾಧ್ಯವಿರಲಿಲ್ಲ.</verse>
				<verse number="8">ಆದರೆ ಪಾಪವು, ಆ ಆಜ್ಞೆಯಿಂದ ಅನುಕೂಲ ಹೊಂದಿ ನನ್ನಲ್ಲಿ ಎಲ್ಲಾ ವಿಧದ ಆಶೆಗಳನ್ನು ಉಂಟುಮಾಡಿತು. ಏಕೆಂದರೆ ನಿಯಮವಿಲ್ಲದೆ ಪಾಪವು ಸತ್ತದ್ದಾಗಿರುತ್ತದೆ.</verse>
				<verse number="9">ಒಮ್ಮೆ ನಾನು ನಿಯಮವಿಲ್ಲದೆ ಜೀವಿಸುತ್ತಿದ್ದೆನು. ಆದರೆ ಯಾವಾಗ ಆಜ್ಞೆಯು ಬಂದಿತೋ ಆಗ ಪಾಪವು ಜೀವಂತವಾಯಿತು, ನಾನು ಸತ್ತವನಾದೆನು.</verse>
				<verse number="10">ಜೀವವನ್ನು ತರಲಿಕ್ಕಾಗಿ ಕೊಟ್ಟಿರುವ ಆಜ್ಞೆಯೇ ಮರಣವನ್ನು ಉಂಟುಮಾಡುವುದಾಯಿತು ಎಂದು ಕಂಡುಕೊಂಡೆನು.</verse>
				<verse number="11">ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ, ಅದೇ ನನ್ನನ್ನು ಮರಣಕ್ಕೆ ಒಳಪಡಿಸಿತು.</verse>
				<verse number="12">ಹೀಗಿರಲಾಗಿ, ನಿಯಮವು ಪವಿತ್ರವಾದದ್ದು. ಆಜ್ಞೆಯು ಪವಿತ್ರವೂ ನ್ಯಾಯವೂ ಒಳ್ಳೆಯದೂ ಆಗಿರುತ್ತದೆ.</verse>
				<verse number="13">ಹಾಗಾದರೆ ಒಳ್ಳೆಯದಾಗಿರುವ ನಿಯಮವೇ ನನಗೆ ಮರಣಕ್ಕೆ ಕಾರಣವಾಯಿತೋ? ಎಂದಿಗೂ ಇಲ್ಲ! ಆದರೂ ಪಾಪವು ಪಾಪವೇ ಎಂದು ಕಾಣುವಂತೆ ಒಳ್ಳೆಯದಾಗಿರುವ ನಿಯಮದ ಮೂಲಕವೇ ಪಾಪವು ನನ್ನಲ್ಲಿ ಮರಣವು ಉಂಟಾಗುವಂತೆ ಮಾಡಿತು. ಈ ರೀತಿಯಾಗಿ ಆಜ್ಞೆಯ ಮೂಲಕ ಪಾಪವು ಘೋರವಾದದ್ದೇ ಎಂದು ಕಂಡುಬರಲು ಸಾಧ್ಯವಾಯಿತು.</verse>
				<verse number="14">ನಿಯಮವು ಆತ್ಮಿಕವಾದದ್ದೆಂದು ಬಲ್ಲೆವು. ಆದರೆ ನರಮಾನವನಾದ ನಾನು ಪಾಪಕ್ಕೆ ಗುಲಾಮನಂತೆ ಮಾರಿಕೊಂಡವನಾಗಿದ್ದೇನೆ.</verse>
				<verse number="15">ನಾನು ಏನು ಮಾಡುತ್ತೇನೆ ಎಂಬುದನ್ನು ತಿಳಿಯದವನಾಗಿದ್ದೇನೆ. ಏಕೆಂದರೆ ನಾನು ಮಾಡಬೇಕೆಂದು ಬಯಸುವುದನ್ನು ಮಾಡದೆ, ಯಾವುದನ್ನು ದ್ವೇಷಿಸುತ್ತೇನೋ ಅದನ್ನೇ ಮಾಡುವವನಾಗಿದ್ದೇನೆ.</verse>
				<verse number="16">ನಾನು ಮಾಡಲು ಬಯಸದಿರುವುದನ್ನು ಮಾಡುವುದಾದರೆ, ನಿಯಮವು ಒಳ್ಳೆಯದೆಂದು ಒಪ್ಪುತ್ತೇನೆ.</verse>
				<verse number="17">ಹೀಗಿರಲಾಗಿ ನಾನು ಬಯಸದಿರುವುದನ್ನು ಮಾಡುವವನು ಇನ್ನು ನಾನಲ್ಲ, ನನ್ನಲ್ಲಿ ನೆಲೆಸಿರುವ ಪಾಪವೇ ಅದನ್ನು ಮಾಡುತ್ತದೆ.</verse>
				<verse number="18">ನನ್ನಲ್ಲಿ, ಅಂದರೆ ನನ್ನ ಶಾರೀರಿಕ ಸ್ವಭಾವದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲ ಎಂದು ಬಲ್ಲೆನು. ಏಕೆಂದರೆ ಒಳ್ಳೆಯದನ್ನು ಮಾಡಬೇಕೆಂಬ ಮನಸ್ಸೇನೋ ನನ್ನಲ್ಲಿ ಇದೆ, ಆದರೆ ಅದನ್ನು ಮಾಡುವುದಕ್ಕೆ ನನ್ನಿಂದಾಗದು.</verse>
				<verse number="19">ನಾನು ಬಯಸುವ ಒಳ್ಳೆಯದನ್ನು ಮಾಡದೆ, ನಾನು ಮಾಡಲು ಬಯಸದೆ ಇರುವ ಕೆಟ್ಟದ್ದನ್ನೇ ಮಾಡುತ್ತಿದ್ದೇನೆ.</verse>
				<verse number="20">ಮಾಡಬಾರದೆನ್ನುವ ಕೆಲಸವನ್ನು ನಾನು ಮಾಡುತ್ತಿರುವುದಾದರೆ ಅದನ್ನು ಮಾಡಿದವನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತಿದೆ.</verse>
				<verse number="21">ಒಳ್ಳೆಯದನ್ನು ಮಾಡಲು ಬಯಸುತ್ತಿರುವ ನನ್ನಲ್ಲಿ ಕೆಟ್ಟದ್ದು ಇರುವ ನಿಯಮವನ್ನು ಕಾಣುತ್ತಿದ್ದೇನೆ.</verse>
				<verse number="22">ಏಕೆಂದರೆ ನಾನು ಹೃದಯಪೂರ್ವಕವಾಗಿ ದೇವರ ನಿಯಮದಲ್ಲಿ ಹರ್ಷಗೊಳ್ಳುವವನಾಗಿದ್ದೇನೆ.</verse>
				<verse number="23">ಆದರೆ ನನ್ನ ಅವಯವಗಳಲ್ಲಿ ಬೇರೊಂದು ನಿಯಮವನ್ನು ಕಾಣುತ್ತಿದ್ದೇನೆ. ಅದು ನನ್ನ ಮನಸ್ಸಿನಲ್ಲಿರುವ ನಿಯಮಕ್ಕೆ ವಿರೋಧವಾಗಿ ಹೋರಾಡುತ್ತಾ ನನ್ನ ಅವಯವಗಳಲ್ಲಿ ಸೇರಿಕೊಂಡಿರುವ ಪಾಪದ ನಿಯಮಕ್ಕೆ ಸೆರೆಯವನನ್ನಾಗಿ ಮಾಡುತ್ತಿದೆ.</verse>
				<verse number="24">ನಾನು ಎಂಥಾ ದುರವಸ್ಥೆಯುಳ್ಳ ಮನುಷ್ಯನು! ನನ್ನನ್ನು ಈ ಮರಣಕರವಾದ ದೇಹದಿಂದ ಯಾರು ಬಿಡಿಸಬಲ್ಲರು?</verse>
				<verse number="25">ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ದೇವರಿಗೆ ಸ್ತೋತ್ರ! ಏಕೆಂದರೆ ನನ್ನಷ್ಟಕ್ಕೆ ನಾನೇ ನನ್ನ ಮನಸ್ಸಿನಲ್ಲಿ ದೇವರ ನಿಯಮಕ್ಕೆ ಗುಲಾಮನಾಗಿಯೂ ನನ್ನ ಮಾಂಸಭಾವದ ದೇಹದಲ್ಲಿ ಪಾಪದ ನಿಯಮಕ್ಕೆ ಗುಲಾಮನಾಗಿಯೂ ಇದ್ದೇನೆ.</verse>
			</chapter>
			<chapter number="8">
				<verse number="1">ಆದ್ದರಿಂದ, ಈಗ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.</verse>
				<verse number="2">ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ.</verse>
				<verse number="3">ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.</verse>
				<verse number="4">ಹೀಗೆ ನಾವು ಮಾಂಸಭಾವದವರಾಗಿ ಬಾಳದೆ ಪವಿತ್ರಾತ್ಮರಿಗನುಸಾರವಾಗಿ ಬಾಳುವ ನಮ್ಮಲ್ಲಿ ನಿಯಮದ ಅಗತ್ಯವು ನೆರವೇರುವುದಕ್ಕೆ ಆಸ್ಪದವಾಯಿತು.</verse>
				<verse number="5">ಮಾಂಸಭಾವದವರಾಗಿ ಬಾಳುವವರ ಮನಸ್ಸು ಅದಕ್ಕೆ ಸಂಬಂಧಪಟ್ಟವುಗಳ ಮೇಲಿರುತ್ತದೆ. ಆದರೆ ಪವಿತ್ರಾತ್ಮ ದೇವರಿಗೆ ಅನುಸಾರವಾಗಿ ಬಾಳುವವರ ಮನಸ್ಸು ಪವಿತ್ರಾತ್ಮ ದೇವರಿಗೆ ಸಂಬಂಧಪಟ್ಟವುಗಳ ಮೇಲಿರುತ್ತದೆ.</verse>
				<verse number="6">ಮಾಂಸಭಾವದ ಮನಸ್ಸು ಮರಣಕರವಾದದ್ದು, ಪವಿತ್ರಾತ್ಮ ದೇವರ ಮೇಲೆ ಮನಸ್ಸಿಡುವುದು ಜೀವವೂ ಸಮಾಧಾನವೂ ಆಗಿರುತ್ತದೆ.</verse>
				<verse number="7">ಮಾಂಸಭಾವದ ಮನಸ್ಸು ದೇವರಿಗೆ ಶತ್ರುವಾಗಿರುತ್ತದೆ. ಏಕೆಂದರೆ, ಅದು ದೇವರ ನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.</verse>
				<verse number="8">ಮಾಂಸಭಾವಕ್ಕೆ ಒಳಗಾದವರು ದೇವರನ್ನು ಮೆಚ್ಚಿಸಲಾರರು.</verse>
				<verse number="9">ಆದರೆ ದೇವರ ಆತ್ಮವು ನಿಮ್ಮಲ್ಲಿ ಇರುವುದು ನಿಜವಾಗಿದ್ದರೆ ನೀವು ಮಾಂಸಭಾವಾಧೀನರಾಗಿರದೆ ದೇವರ ಆತ್ಮನಿಗೆ ಅಧೀನರಾಗಿದ್ದೀರಿ. ಕ್ರಿಸ್ತ ಯೇಸುವಿನ ಆತ್ಮ ಇಲ್ಲದವನು ಕ್ರಿಸ್ತ ಯೇಸುವಿಗೆ ಸೇರಿದವನಲ್ಲ.</verse>
				<verse number="10">ಆದರೆ ಕ್ರಿಸ್ತ ಯೇಸು ನಿಮ್ಮಲ್ಲಿ ಇರುವುದಾದರೆ, ನಿಮ್ಮ ಶರೀರವು ಪಾಪದ ನಿಮಿತ್ತ ಸತ್ತಿದ್ದರೂ ನಿಮ್ಮ ಆತ್ಮವು ನೀತಿಯ ನಿಮಿತ್ತ ಜೀವಿಸುತ್ತದೆ.</verse>
				<verse number="11">ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮವು ನಿಮ್ಮಲ್ಲಿ ವಾಸಮಾಡುತ್ತಿರುವುದಾದರೆ, ಕ್ರಿಸ್ತ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ವಾಸಿಸುವ ಪವಿತ್ರಾತ್ಮ ದೇವರ ಮೂಲಕವೇ ನಿಮ್ಮ ಸಾಯುತ್ತಿರುವ ದೇಹಗಳಿಗೂ ಜೀವವನ್ನು ಕೊಡುವರು.</verse>
				<verse number="12">ಆದ್ದರಿಂದ, ಪ್ರಿಯರೇ, ನಾವು ಮಾಂಸಭಾವದ ಹಂಗಿನಲ್ಲಿಲ್ಲ. ಅದರ ಆಶಾಪಾಶಗಳಿಗೆ ಅನುಗುಣವಾಗಿ ಬದುಕಲು ಋಣಸ್ಥರಲ್ಲ.</verse>
				<verse number="13">ಏಕೆಂದರೆ, ನೀವು ಮಾಂಸಭಾವಕ್ಕೆ ಅನುಸಾರವಾಗಿ ಜೀವಿಸಿದರೆ, ಸಾಯುವಿರಿ. ಆದರೆ ಪವಿತ್ರಾತ್ಮ ದೇವರಿಂದ ದೈಹಿಕ ದುರಭ್ಯಾಸಗಳನ್ನು ಸಾಯಿಸಿದರೆ, ನೀವು ಬದುಕುವಿರಿ.</verse>
				<verse number="14">ಯಾರು ದೇವರ ಆತ್ಮರಿಂದ ನಡಿಸಿಕೊಳ್ಳುತ್ತಾರೋ ಅವರು ದೇವರ ಪುತ್ರರಾಗಿರುತ್ತಾರೆ.</verse>
				<verse number="15">ನಿಮ್ಮನ್ನು ಪುನಃ ಭಯಕ್ಕೆ ದಾಸರನ್ನಾಗಿ ಮಾಡುವ ಆತ್ಮನನ್ನು ನಾವು ಹೊಂದದೆ, ಪುತ್ರತ್ವದ ಪವಿತ್ರಾತ್ಮನನ್ನೇ ಹೊಂದಿದವರಾಗಿ ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುತ್ತೇವೆ.</verse>
				<verse number="16">ನಾವು ದೇವರ ಮಕ್ಕಳಾಗಿದ್ದೇವೆ ಎಂಬುದಕ್ಕೆ ದೇವರ ಆತ್ಮರು ನಮ್ಮ ಆತ್ಮದೊಂದಿಗೆ ಸಾಕ್ಷಿಕೊಡುತ್ತಾರೆ.</verse>
				<verse number="17">ನಾವು ಈಗ ಮಕ್ಕಳಾಗಿರುವುದಾದರೆ, ಬಾಧ್ಯರಾಗಿರುತ್ತೇವೆ; ದೇವರಿಗೆ ಬಾಧ್ಯರು ಮತ್ತು ಕ್ರಿಸ್ತ ಯೇಸುವಿನೊಂದಿಗೆ ಸಹಬಾಧ್ಯರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನ ಶ್ರಮೆಗಳಲ್ಲಿ ನಿಜವಾಗಿಯೂ ಪಾಲುಗಾರರಾಗಿದ್ದರೆ, ಅವರ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.</verse>
				<verse number="18">ನಮಗೆ ಮುಂದೆ ಪ್ರಕಟವಾಗಲಿರುವ ಮಹಿಮೆಯೊಂದಿಗೆ ಹೋಲಿಸುವಾಗ ಈಗಿನ ಸಂಕಟಗಳು ಅಲ್ಪವೆಂದು ನಾನು ಎಣಿಸುತ್ತೇನೆ.</verse>
				<verse number="19">ದೇವರ ಮಕ್ಕಳ ಪ್ರತ್ಯಕ್ಷತೆಯನ್ನು ಸೃಷ್ಟಿಯು ಆತುರದಿಂದ ಎದುರು ನೋಡುತ್ತಿದೆ.</verse>
				<verse number="20">ಸೃಷ್ಟಿಯು ನಾಶಕ್ಕೆ ಒಳಗಾಯಿತು. ಆದರೆ ಸ್ವಂತ ಇಚ್ಛೆಯಿಂದಲ್ಲ. ಅದನ್ನು ನಿರೀಕ್ಷೆಯಿಂದ ಒಳಪಡಿಸಿದ ದೇವರಿಂದಲೇ ಆಯಿತು. ಆದರೂ ಸೃಷ್ಟಿಗೂ ನಿರೀಕ್ಷೆಯಿದೆ.</verse>
				<verse number="21">ಈ ಸೃಷ್ಟಿಯು ಕೂಡ ನಾಶದ ಬಂಧನದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ಸ್ವಾತಂತ್ರ್ಯದಲ್ಲಿ ಪಾಲುಗೊಳ್ಳುತ್ತದೆ.</verse>
				<verse number="22">ಈವರೆಗೂ ಸೃಷ್ಟಿಯೆಲ್ಲ ಪ್ರಸವ ವೇದನೆಯಂಥ ನೋವಿನಿಂದ ನರಳುತ್ತಿದೆ ಎಂದು ನಾವು ಬಲ್ಲೆವು.</verse>
				<verse number="23">ಅಷ್ಟೇ ಅಲ್ಲದೆ, ಪವಿತ್ರಾತ್ಮ ದೇವರ ಪ್ರಥಮ ಫಲವನ್ನು ಹೊಂದಿದವರಾಗಿರುವ ನಾವು ಕೂಡ, ಮಕ್ಕಳ ಪದವಿಯನ್ನು ಪಡೆಯುವುದಕ್ಕಾಗಿ ನಮ್ಮ ದೇಹಗಳ ಬಿಡುಗಡೆಗಾಗಿ ಎದುರುನೋಡುತ್ತಾ ಆತುರದಿಂದ ನರಳುತ್ತಾ ಇದ್ದೇವೆ.</verse>
				<verse number="24">ಈ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ಆದರೆ ಕಣ್ಣಿಗೆ ಕಾಣುವ ನಿರೀಕ್ಷೆಯು ನಿರೀಕ್ಷೆಯೇ ಅಲ್ಲ. ಕಾಣುತ್ತಿರುವುದನ್ನು ಯಾರಾದರೂ ನಿರೀಕ್ಷಿಸುವರೋ?</verse>
				<verse number="25">ಆದರೆ ನಾವು ಇನ್ನು ಕಾಣದಿರುವಂಥದ್ದಕ್ಕಾಗಿ ನಿರೀಕ್ಷಿಸುವುದಾದರೆ ಅದಕ್ಕಾಗಿ ತಾಳ್ಮೆಯಿಂದ ಕಾದುಕೊಂಡಿರುತ್ತೇವೆ.</verse>
				<verse number="26">ಅದೇ ರೀತಿಯಲ್ಲಿ ಪವಿತ್ರಾತ್ಮರು ನಮ್ಮ ಬಲಹೀನತೆಯಲ್ಲಿ ನಮಗೆ ಸಹಾಯ ಮಾಡುತ್ತಾರೆ. ಯಾವುದಕ್ಕಾಗಿ ಹೇಗೆ ಪ್ರಾರ್ಥಿಸಬೇಕೆಂದು ನಾವು ತಿಳಿಯದವರಾಗಿದ್ದೇವೆ. ಆದರೆ ಪವಿತ್ರಾತ್ಮರು ತಾವೇ ಮಾತುಗಳಿಂದ ವ್ಯಕ್ತಪಡಿಸಲು ಸಾಧ್ಯವಾಗದ ನರಳಾಟದೊಂದಿಗೆ ನಮಗೋಸ್ಕರ ಪ್ರಾರ್ಥಿಸುವವರಾಗಿದ್ದಾರೆ.</verse>
				<verse number="27">ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರು ಪವಿತ್ರಾತ್ಮರ ಮನಸ್ಸನ್ನು ಬಲ್ಲವರಾಗಿದ್ದಾರೆ. ಏಕೆಂದರೆ ಪವಿತ್ರಾತ್ಮರು ದೇವಜನರಿಗಾಗಿ ದೇವರ ಚಿತ್ತದ ಪ್ರಕಾರ ವಿಜ್ಞಾಪಿಸುತ್ತಾರೆ.</verse>
				<verse number="28">ದೇವರನ್ನು ಪ್ರೀತಿಸಿ ದೇವರ ಉದ್ದೇಶಕ್ಕೆ ಅನುಸಾರವಾಗಿ ಕರೆಹೊಂದಿದವರಿಗೆ ಸಕಲವನ್ನು ಒಳ್ಳೆಯದಕ್ಕಾಗಿಯೇ ದೇವರು ಮಾಡುವರು, ಎಂದು ನಮಗೆ ಗೊತ್ತಿದೆ.</verse>
				<verse number="29">ಅನೇಕ ಸಹೋದರರ ಮಧ್ಯೆ ಜ್ಯೇಷ್ಠಪುತ್ರನೆನಿಸುವಂತೆ ದೇವರು ಯಾರನ್ನು ಮೊದಲು ತಿಳಿದುಕೊಂಡರೋ ಅವರನ್ನು ತಮ್ಮ ಪುತ್ರನ ಹೋಲಿಕೆಗೆ ಸಮಾನರಾಗುವಂತೆ ಮುಂದಾಗಿ ನೇಮಿಸಿದರು.</verse>
				<verse number="30">ಆದರೆ ದೇವರು ಯಾರನ್ನು ಮುಂದಾಗಿ ನೇಮಿಸಿದರೋ, ಅವರನ್ನು ಕರೆದರು; ಯಾರನ್ನು ಕರೆದರೋ, ಅವರನ್ನು ನೀತಿವಂತರೆಂದು ನಿರ್ಣಯಿಸಿದರು; ಯಾರನ್ನು ನೀತಿವಂತರೆಂದು ನಿರ್ಣಯಿಸಿದರೋ ಅವರನ್ನು ಮಹಿಮೆಪಡಿಸಿದರು.</verse>
				<verse number="31">ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?</verse>
				<verse number="32">ದೇವರು ತಮ್ಮ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೋಸ್ಕರ ಕ್ರಿಸ್ತ ಯೇಸುವನ್ನು ಕೊಟ್ಟ ಮೇಲೆ ನಮಗೆ ಉದಾರವಾಗಿ ಅವರೊಂದಿಗೆ ಎಲ್ಲವನ್ನು ಸಹ ಕೊಡದೆ ಇರುವರೇ?</verse>
				<verse number="33">ದೇವರು ತಾವೇ ಆರಿಸಿಕೊಂಡವರ ಮೇಲೆ ದೋಷಾರೋಪಣೆ ಮಾಡುವವರಾರು? ದೇವರೇ ನೀತಿವಂತರೆಂದು ನಿರ್ಣಯ ಮಾಡುವವರಾಗಿರುತ್ತಾರೆ.</verse>
				<verse number="34">ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ, ಜೀವಿತರಾಗಿ ಎದ್ದು ದೇವರ ಬಲಗಡೆಯಲ್ಲಿ ಇದ್ದಾರೆ ಮತ್ತು ಅವರೇ ನಮಗೋಸ್ಕರ ವಿಜ್ಞಾಪಿಸುವವರಾಗಿರುತ್ತಾರೆ.</verse>
				<verse number="35">ಕ್ರಿಸ್ತ ಯೇಸುವಿನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಇಕ್ಕಟ್ಟೋ ಹಿಂಸೆಯೋ ಆಹಾರವಿಲ್ಲದಿರುವುದೋ ಬಟ್ಟೆ ಇಲ್ಲದಿರುವುದೋ ಅಪಾಯವೋ ಖಡ್ಗವೋ? ಇವೆಲ್ಲವೂ ನಮ್ಮನ್ನು ಅಗಲಿಸಲಾರವು.</verse>
				<verse number="36">ಇವು ಪವಿತ್ರ ವೇದದಲ್ಲಿ ಬರೆದಿರುವಂತೆ ಇವೆ: “ನಿನಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ; ವಧಿಸಲಿಕ್ಕಾಗಿರುವ ಕುರಿಗಳಂತೆ ನಾವು ಭಾವಿಸಿರುತ್ತೇವೆ.”</verse>
				<verse number="37">ಇವೆಲ್ಲವುಗಳಲ್ಲಿಯೂ ನಾವು ನಮ್ಮನ್ನು ಪ್ರೀತಿಸಿದಾತನ ಮೂಲಕ ಜಯ ಹೊಂದಿದವರಿಗಿಂತಲೂ ಹೆಚ್ಚಿನವರಾಗಿದ್ದೇವೆ.</verse>
				<verse number="38">ಏಕೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ವರ್ತಮಾನಕಾಲದ ಸಂಗತಿಗಳಾಗಲಿ, ಭವಿಷ್ಯತ್ಕಾಲದ ಸಂಗತಿಗಳಾಗಲಿ, ಯಾವುದೇ ಶಕ್ತಿಯಾಗಲಿ,</verse>
				<verse number="39">ಎತ್ತರವಾಗಲಿ, ಆಳವಾಗಲಿ ಅಥವಾ ಸೃಷ್ಟಿಯಲ್ಲಿರುವ ಬೇರೆ ಯಾವುದೇ ಆಗಲಿ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ನಮ್ಮನ್ನು ಅಗಲಿಸಲಾಗದೆಂದು ನಮಗೆ ದೃಢ ನಿಶ್ಚಯವಿದೆ.</verse>
			</chapter>
			<chapter number="9">
				<verse number="1">ನಾನು ಕ್ರಿಸ್ತ ಯೇಸುವಿನಲ್ಲಿ ಸತ್ಯವನ್ನು ಮಾತನಾಡುತ್ತೇನೆ. ನಾನು ಸುಳ್ಳು ಹೇಳುತ್ತಾ ಇಲ್ಲ. ನನ್ನ ಮನಸ್ಸಾಕ್ಷಿಯು ಇದನ್ನು ಪವಿತ್ರಾತ್ಮ ದೇವರ ಮೂಲಕ ಖಚಿತ ಪಡಿಸುತ್ತದೆ.</verse>
				<verse number="2">ನನ್ನ ಹೃದಯದಲ್ಲಿ ಮಹಾದುಖಃವೂ ಎಡೆಬಿಡದ ವೇದನೆಯೂ ತೀರದವೇದನೆಯೂ ಇದೆ.</verse>
				<verse number="3">ನನ್ನ ಸ್ವಂತ ಜನರಾದ ನನ್ನ ಯೆಹೂದ್ಯ ಸಹೋದರರಿಗಾಗಿ, ಸಾಧ್ಯವಾದರೆ ನಾನೇ ಕ್ರಿಸ್ತ ಯೇಸುವಿನಿಂದ ದೂರಹೋಗಿ ಶಾಪಗ್ರಸ್ತನಾಗಲು ಸಿದ್ಧನಾಗಿದ್ದೇನೆ.</verse>
				<verse number="4">ಇಸ್ರಾಯೇಲರಾದ ಅವರಿಗೆ ಸ್ವೀಕಾರವೂ ದೇವರ ಮಹಿಮೆಯೂ ಒಡಂಬಡಿಕೆಗಳೂ ನಿಯಮ ಕೊಡೋಣವೂ ದೇವಾಲಯದ ಸೇವೆಯೂ ಹಾಗೂ ವಾಗ್ದಾನಗಳೂ ಒಪ್ಪಿಸಲಾಗಿವೆ.</verse>
				<verse number="5">ನಮ್ಮ ಪಿತೃಗಳು ಅವರಿಗೆ ಸೇರಿದವರು. ಕ್ರಿಸ್ತ ಯೇಸುವು ಮನುಷ್ಯರಾಗಿ ಹುಟ್ಟಿದ್ದು ಅವರ ವಂಶದಲ್ಲಿಯೇ; ಈ ಕ್ರಿಸ್ತ ಯೇಸುವೇ ಎಲ್ಲರ ಮೇಲಿರುವ ದೇವರೂ ಎಂದೆಂದಿಗೂ ಸ್ತುತಿಹೊಂದತಕ್ಕವರೂ ಆಗಿದ್ದಾರೆ! ಆಮೆನ್.</verse>
				<verse number="6">ಇದು ದೇವರ ವಾಕ್ಯವು ನೆರವೇರಲಿಲ್ಲ ಎಂಬಂತೆ ಅಲ್ಲ. ಏಕೆಂದರೆ ಇಸ್ರಾಯೇಲ್ ವಂಶದಲ್ಲಿ ಬಂದವರೆಲ್ಲರೂ ಇಸ್ರಾಯೇಲರಲ್ಲ.</verse>
				<verse number="7">ಅಥವಾ ಅಬ್ರಹಾಮನ ಸಂತತಿಯವರೆಲ್ಲ ಅವನ ಮಕ್ಕಳಲ್ಲ. ಆದರೆ, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು,” ಎಂದು ಹೇಳಲಾಗಿದೆ.</verse>
				<verse number="8">ಇದರ ಅರ್ಥ, ಶರೀರಸಂಬಂಧದ ಮಕ್ಕಳು ದೇವರ ಮಕ್ಕಳಾಗಿರದೆ ವಾಗ್ದಾನದ ಮಕ್ಕಳೇ ಅಬ್ರಹಾಮನ ಮಕ್ಕಳೆಂದು ಎನಿಸಿಕೊಳ್ಳುವರು ಎಂಬುದು.</verse>
				<verse number="9">ಏಕೆಂದರೆ, “ನೇಮಕವಾದ ಕಾಲದಲ್ಲಿ ನಾನು ತಿರುಗಿ ಬಂದಾಗ ಸಾರಳಿಗೆ ಒಬ್ಬ ಮಗನಿರುವನು,” ಅದು ವಾಗ್ದಾನದ ಮಾತಾಗಿತ್ತು.</verse>
				<verse number="10">ಇದು ಮಾತ್ರವಲ್ಲದೆ, ರೆಬೆಕ್ಕಳು ಸಹ ನಮ್ಮ ಪಿತೃವಾದ ಇಸಾಕನ ಮೂಲಕ ಅವಳಿಜವಳಿ ಮಕ್ಕಳನ್ನು ಪಡೆದಳು.</verse>
				<verse number="11">ಹೀಗೆ, ಆ ಮಕ್ಕಳು ಹುಟ್ಟುವುದಕ್ಕೆ ಮುಂಚೆ, ಒಳ್ಳೆಯದು ಅಥವಾ ಕೆಟ್ಟದ್ದನ್ನು ಮಾಡುವುದಕ್ಕೆ ಮುಂಚೆಯೇ, ದೇವರ ಆಯ್ಕೆಯ ಉದ್ದೇಶವು ಕೃತ್ಯಗಳಿಗೆ ಅನುಸಾರವಲ್ಲವೆಂಬುದು ಸ್ಥಿರವಾಯಿತು.</verse>
				<verse number="12">ಆದರೆ ಅದು ಕರೆಯುವಾತನಿಂದಲೇ, “ಹಿರಿಯನು ಕಿರಿಯವನಿಗೆ ಸೇವೆಮಾಡುವನು,” ಎಂದು ರೆಬೆಕ್ಕಳಿಗೆ ಹೇಳಲಾಗಿತ್ತು.</verse>
				<verse number="13">ಇದಕ್ಕನುಸಾರವಾಗಿ, “ಯಾಕೋಬನನ್ನು ನಾನು ಪ್ರೀತಿಸಿದೆನು, ಆದರೆ ಏಸಾವನನ್ನು ಹಗೆ ಮಾಡಿದೆನು,” ಎಂದು ಬರೆದಿರುತ್ತದೆ.</verse>
				<verse number="14">ಹಾಗಾದರೆ ನಾವು ಏನು ಹೇಳೋಣ? ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ.</verse>
				<verse number="15">ದೇವರು ಮೋಶೆಗೆ ಹೇಳಿದ್ದೇನೆಂದರೆ, “ಯಾವನ ಮೇಲೆ ನನ್ನ ಕರುಣೆ ಉಂಟೋ, ಅವನನ್ನು ಕರುಣಿಸುವೆನು. ಯಾವನ ಮೇಲೆ ನನ್ನ ಕನಿಕರವಿದೆಯೋ ಅವನನ್ನು ಕನಿಕರಿಸುವೆನು.”</verse>
				<verse number="16">ಆದ್ದರಿಂದ ದೇವರ ಆಯ್ಕೆಯು ಮನುಷ್ಯನ ಬಯಕೆ ಅಥವಾ ಪ್ರಯತ್ನದಿಂದಾಗಿರದೆ, ದೇವರ ಕರುಣೆಯಿಂದಲೇ ಆಗಿದೆ.</verse>
				<verse number="17">ಏಕೆಂದರೆ, “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತಸ್ಥಾನಕ್ಕೆ ಏರಿಸಿದೆನು,” ಎಂದು ಪವಿತ್ರ ವೇದದಲ್ಲಿ ದೇವರು ಫರೋಹನಿಗೆ ಹೇಳುತ್ತಾರೆ.</verse>
				<verse number="18">ಆದ್ದರಿಂದ ದೇವರು ಯಾರನ್ನು ಕರುಣಿಸಬೇಕೆಂದು ಬಯಸುತ್ತಾರೋ, ಅವರನ್ನು ಕರುಣಿಸುತ್ತಾರೆ. ಯಾರನ್ನು ಕಠಿಣಪಡಿಸಬೇಕೆಂದು ಬಯಸುತ್ತಾರೋ, ಅವರನ್ನು ಕಠೋರನ್ನಾಗಿ ಮಾಡುತ್ತಾರೆ.</verse>
				<verse number="19">ಹಾಗಾದರೆ ನೀನು, “ದೇವರು ಇನ್ನೂ ತಪ್ಪು ಕಂಡುಹಿಡಿಯುವುದು ಏಕೆ? ದೇವರ ಸಂಕಲ್ಪವನ್ನು ಎದುರಿಸುವವರು ಯಾರು?” ಎಂದು ನೀನು ನನ್ನನ್ನು ಕೇಳುವೆ.</verse>
				<verse number="20">ಎಲೈ, ಮನುಷ್ಯನೇ, ದೇವರಿಗೆ ಎದುರಾಗಿ ಮಾತನಾಡಲು ನೀನು ಯಾರು? “ರೂಪಿಸಿರುವುದು ರೂಪಿಸಿದವನಿಗೆ, ‘ಏಕೆ ನನ್ನನ್ನು ಹೀಗೆ ರೂಪಿಸಿದೆ?’ ” ಎಂದು ಪ್ರಶ್ನಿಸಬಹುದೋ?</verse>
				<verse number="21">ಕುಂಬಾರನಿಗೆ ಒಂದೇ ಮಣ್ಣಿನ ರಾಶಿಯಿಂದ ಒಂದನ್ನು ಉತ್ತಮವಾದ ಪಾತ್ರೆಯನ್ನಾಗಿಯೂ ಮತ್ತೊಂದನ್ನು ಸಾಮಾನ್ಯವಾದ ಪಾತ್ರೆಯನ್ನಾಗಿಯೂ ಮಾಡುವ ಅಧಿಕಾರ ಇಲ್ಲವೋ?</verse>
				<verse number="22">ನಾಶಕ್ಕೂ, ಕೋಪಾಗ್ನಿಗೂ ಪಾತ್ರೆಯಾಗಿರುವುದರ ಮೇಲೆ ದೇವರು ತಮ್ಮ ಕೋಪವನ್ನು ತೋರಿಸಿ ತಮ್ಮ ಸಾಮರ್ಥ್ಯವನ್ನು ತಿಳಿಯಪಡಿಸಬೇಕೆಂದಿದ್ದರೂ ಬಹು ಸಹನೆಯಿಂದ ತಾಳಿಕೊಂಡಿರಲು ಬಯಸಿದರೆ, ಯಾರು ಏನು ಮಾಡಬಹುದು?</verse>
				<verse number="23">ದೇವರು ಯೆಹೂದ್ಯರೊಳಗಿಂದ ಮಾತ್ರವೇ ಕರೆಯದೆ, ಯೆಹೂದ್ಯರಲ್ಲದವರಿಂದಲೂ ಕರೆದು, ಮಹಿಮೆಗೆಂದು ಮೊದಲೇ ಸಿದ್ಧಮಾಡಿ, ತಮ್ಮ ಕರುಣೆಗೆ ಪಾತ್ರರಾದ ಜನರಿಗೆ ತಮ್ಮ ಮಹಿಮೆಯ ಐಶ್ವರ್ಯವನ್ನು ಪ್ರಕಟಿಸಲು ಇದನ್ನು ಮಾಡಿದರು.</verse>
				<verse number="24">ಇದಕ್ಕಾಗಿಯೇ ದೇವರು ಯೆಹೂದ್ಯರನ್ನು ಮಾತ್ರವೇ ಕರೆಯದೆ ಯೆಹೂದ್ಯರಲ್ಲದವರನ್ನು ಸಹ ಕರೆದಿದ್ದಾರಲ್ಲಾ?</verse>
				<verse number="25">ಹೋಶೇಯನ ಪ್ರವಾದನೆಯಲ್ಲಿ ದೇವರು, “ನನ್ನ ಜನರಲ್ಲದವರನ್ನು ‘ನನ್ನ ಜನರು,’ ಎಂದು ಕರೆಯುವರು. ನಾನು ಪ್ರೀತಿಸದವರನ್ನು ನನ್ನ ‘ಪ್ರಿಯರು’ ಎಂದೂ ಹೇಳುವರು.”</verse>
				<verse number="26">ಮತ್ತು, “ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲ,’ ಎಂದು ಅವರಿಗೆ ಹೇಳಲಾಗಿತ್ತೋ, ಆ ಸ್ಥಳದಲ್ಲಿಯೇ, ‘ಅವರು ಜೀವಸ್ವರೂಪಿಯಾದ ದೇವರ ಮಕ್ಕಳು,’ ಎಂದು ಕರೆಯಲಾಗುವರು,” ಎಂದು ದೇವರು ಹೇಳುತ್ತಾರೆ.</verse>
				<verse number="27">ಇದಲ್ಲದೆ ಯೆಶಾಯನು ಇಸ್ರಾಯೇಲರನ್ನು ಕುರಿತು ಕೂಗಿ ಹೇಳುವುದೇನೆಂದರೆ, “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಣೆಹೊಂದುವರು.</verse>
				<verse number="28">ಏಕೆಂದರೆ ಕರ್ತನು ತಮ್ಮ ವಾಕ್ಯವನ್ನು ಭೂಮಿಯ ಮೇಲೆ ಅಂತಿಮವಾಗಿಯೂ ತ್ವರಿತವಾಗಿಯೂ ನೆರವೇರಿಸುವರು.”</verse>
				<verse number="29">ಯೆಶಾಯನು ಈ ಹಿಂದೆ, “ಸೇನಾಧೀಶ್ವರರಾದ ದೇವರು ನಮಗೆ ಸಂತತಿಯನ್ನು ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರದ ಹಾಗೆ ಇರುತ್ತಿದ್ದೆವು.” ಎಂದು ಹೇಳಿದ್ದಾನೆ.</verse>
				<verse number="30">ಹಾಗಾದರೆ ನಾವು ಏನು ಹೇಳೋಣ? ನೀತಿಯನ್ನು ಅನುಸರಿಸದ ಯೆಹೂದ್ಯರಲ್ಲದವರು ನಂಬಿಕೆಯ ಮೂಲಕ ದೊರಕುವ ನೀತಿಯನ್ನು ಪಡೆದರು.</verse>
				<verse number="31">ಆದರೆ ನೀತಿಯ ನಿಯಮವನ್ನು ಅನುಸರಿಸಿದ ಇಸ್ರಾಯೇಲರಾದರೋ ಆ ನೀತಿಯ ಮಾರ್ಗವನ್ನು ಪಡೆಯಲಿಲ್ಲ.</verse>
				<verse number="32">ಏಕೆ? ಏಕೆಂದರೆ ಅವರು ನಂಬಿಕೆಯನ್ನು ಅನುಸರಿಸದೆ ಕೃತ್ಯಗಳನ್ನು ಅನುಸರಿಸಿದ್ದರಿಂದಲೇ. ಅವರು ಎಡವುಕಲ್ಲನ್ನು ಎಡವಿದರು.</verse>
				<verse number="33">ಪವಿತ್ರ ವೇದದಲ್ಲಿ ಹೀಗೆ ಬರೆಯಲಾಗಿದೆ: “ಇಗೋ, ನಾನು ಚೀಯೋನಿನಲ್ಲಿ ಜನರು ಎಡವಿ ಬೀಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ.”</verse>
			</chapter>
			<chapter number="10">
				<verse number="1">ಪ್ರಿಯರೇ, ನನ್ನ ಹೃದಯದ ಬಯಕೆಯು, ನಾನು ದೇವರಿಗೆ ಸಲ್ಲಿಸುವ ಪ್ರಾರ್ಥನೆಯು ಇಸ್ರಾಯೇಲರು ರಕ್ಷಣೆ ಹೊಂದಬೇಕೆಂಬುದೇ.</verse>
				<verse number="2">ಅವರು ದೇವರಿಗಾಗಿ ಆಸಕ್ತರು ಎಂಬುದಾಗಿ ನಾನು ಸಾಕ್ಷಿಕೊಡುತ್ತೇನೆ. ಆದರೆ ಅವರ ಆಸಕ್ತಿಯು ಜ್ಞಾನಕ್ಕೆ ಅನುಸಾರವಾದದ್ದು ಅಲ್ಲ.</verse>
				<verse number="3">ಅವರು ದೇವರಿಂದ ಬರುವ ನೀತಿಯನ್ನು ತಿಳಿಯದವರಾಗಿ ತಮ್ಮದೇ ಆದ ನೀತಿಯನ್ನು ಸ್ಥಾಪಿಸಲು ಪ್ರಯತ್ನಪಟ್ಟದ್ದರಿಂದ ಅವರು ತಮ್ಮನ್ನು ದೇವರ ನೀತಿಗೆ ಒಳಪಡಿಸಲಿಲ್ಲ.</verse>
				<verse number="4">ಕ್ರಿಸ್ತ ಯೇಸುವನ್ನು ನಂಬುವ ಪ್ರತಿಯೊಬ್ಬರಿಗೂ ನೀತಿಯು ದೊರಕುವಂತೆ ಕ್ರಿಸ್ತ ಯೇಸು ಮೋಶೆಯ ನಿಯಮದ ಅಂತ್ಯವಾಗಿರುತ್ತಾರೆ.</verse>
				<verse number="5">ನಿಯಮದಿಂದ ಬರುವ ನೀತಿಯ ಬಗ್ಗೆ ಮೋಶೆಯು ಬರೆದಿರುವುದು ಏನೆಂದರೆ: “ನಿಯಮದಲ್ಲಿ ಬರೆದಿರುವ ಎಲ್ಲವನ್ನೂ ಮಾಡುವವರೇ ಬಾಳುವವರು,” ಎಂಬುದಾಗಿ ಬರೆದನು.</verse>
				<verse number="6">ಆದರೆ ವಿಶ್ವಾಸದಿಂದ ಬರುವ ನೀತಿಯ ಬಗ್ಗೆ ಮೋಶೆಯು ಹೇಳುವುದೇನೆಂದರೆ: “ ‘ಕ್ರಿಸ್ತನನ್ನು ಕೆಳಗೆ ತರಲು ಪರಲೋಕಕ್ಕೆ ಯಾರು ಏರಿ ಹೋಗುವರು?’</verse>
				<verse number="7">ಅಥವಾ, ‘ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರಲು ಯಾರು ಪಾತಾಳಕ್ಕೆ ಇಳಿದು ಹೋಗುವರು?’ ಎಂದು ಮನಸ್ಸಿನಲ್ಲಿ ಹೇಳಿಕೊಳ್ಳಬೇಡ.”</verse>
				<verse number="8">ಆದರೆ ಇದು ಏನು ಹೇಳುತ್ತದೆ, “ತಕ್ಕ ವಾಕ್ಯವು ನಿನ್ನ ಬಳಿಯಲ್ಲಿ ಇದೆ, ಅದು ನಿನ್ನ ಬಾಯಿಯಲ್ಲಿಯೂ ಹೃದಯದಲ್ಲಿಯೂ ಇದೆ.” ಅದೇ ನಾವು ಸಾರುವ ವಿಶ್ವಾಸದ ವಾಕ್ಯ.</verse>
				<verse number="9">ನೀನು, “ಯೇಸುವೇ ಕರ್ತ,” ಎಂದು ಬಾಯಿಂದ ಅರಿಕೆಮಾಡಿ, ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ಹೃದಯದಲ್ಲಿ ನಂಬಿದರೆ ನೀನು ರಕ್ಷಣೆ ಹೊಂದುವೆ.</verse>
				<verse number="10">ನೀನು ನಿನ್ನ ಹೃದಯದಿಂದ ನಂಬಿ ನೀತಿವಂತನೆಂದು ಎಣಿಸಿಕೊಳ್ಳುವಿ ಮತ್ತು ನಿನ್ನ ಬಾಯಿಂದ ನಿನ್ನ ವಿಶ್ವಾಸವನ್ನು ಅರಿಕೆ ಮಾಡಿದಾಗ ರಕ್ಷಣೆ ಹೊಂದುತ್ತಿ.</verse>
				<verse number="11">ಪವಿತ್ರ ವೇದದಲ್ಲಿ ಹೇಳಿರುವಂತೆ, “ಅವರ ಮೇಲೆ ನಂಬಿಕೆಯಿಡುವ ಯಾವನಾದರೂ ಆಶಾಭಂಗಪಡುವದೇ ಇಲ್ಲ.”</verse>
				<verse number="12">ಈ ವಿಷಯದಲ್ಲಿ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಕರ್ತ ಆಗಿರುವ ಒಬ್ಬರೇ ಕರ್ತ; ಅವರು ತಮ್ಮನ್ನು ಕರೆಯುವವರೆಲ್ಲರನ್ನು ಹೇರಳವಾಗಿ ಆಶೀರ್ವದಿಸುತ್ತಾರೆ.</verse>
				<verse number="13">ಏಕೆಂದರೆ, “ಕರ್ತನ ಹೆಸರನ್ನು ಕರೆಯುವವರೆಲ್ಲರಿಗೆ ರಕ್ಷಣೆ ಆಗುವುದು.”</verse>
				<verse number="14">ಆದರೆ, ತಾವು ವಿಶ್ವಾಸವಿಡದ ಕರ್ತನನ್ನು ಕರೆಯುವುದಾದರೂ ಹೇಗೆ? ತಾವು ಕೇಳದ ಕರ್ತನ ಬಗ್ಗೆ ಅವರು ವಿಶ್ವಾಸವಿಡುವುದು ಹೇಗೆ? ಕರ್ತನ ಬಗ್ಗೆ ಸಾರುವವನಿಲ್ಲದೆ ಅವರು ಕೇಳುವುದಾದರೂ ಹೇಗೆ?</verse>
				<verse number="15">ಅವರು ಕಳುಹಿಸದ ಹೊರತು ಸಾರುವುದಾದರೂ ಹೇಗೆ? ಆದ್ದರಿಂದಲೇ, “ಶುಭವರ್ತಮಾನವನ್ನು ಸಾರುವವರ ಪಾದಗಳು ಎಷ್ಟೊಂದು ಅಂದವಾಗಿವೆ!” ಎಂದು ಬರೆಯಲಾಗಿದೆ.</verse>
				<verse number="16">ಆದರೆ ಇಸ್ರಾಯೇಲರಲ್ಲಿ ಎಲ್ಲರೂ ಸುವಾರ್ತೆಯನ್ನು ಸ್ವೀಕರಿಸಲಿಲ್ಲ. ಏಕೆಂದರೆ, “ಕರ್ತನೇ, ನಮ್ಮ ಸಂದೇಶವನ್ನು ಯಾರು ನಂಬಿದರು?” ಎಂದು ಯೆಶಾಯ ಪ್ರವಾದಿಯು ಹೇಳುತ್ತಾನೆ.</verse>
				<verse number="17">ಆದಕಾರಣ, ತಕ್ಕ ವಾಕ್ಯವನ್ನು ಕೇಳುವುದರಿಂದಲೇ ವಿಶ್ವಾಸವು ಬರುತ್ತದೆ, ಅದು ಕ್ರಿಸ್ತನ ವಾಕ್ಯವನ್ನು ಕೇಳುವುದರಿಂದಲೇ ಬರುತ್ತದೆ.</verse>
				<verse number="18">ಆದರೆ ಇಸ್ರಾಯೇಲರು ಎಂದೂ ಸುವಾರ್ತೆಯನ್ನು ಕೇಳಲಿಲ್ಲವೋ ಎಂದು ನಾನು ಪ್ರಶ್ನಿಸುತ್ತೇನೆ? ಅವರು ನಿಶ್ಚಯವಾಗಿ ಕೇಳಿದ್ದಾರೆ. ಪವಿತ್ರ ವೇದದಲ್ಲಿ ಹೇಳಿರುವಂತೆ: “ಅವರ ಸ್ವರವು ಭೂಮಿಯ ಎಲ್ಲಾ ಕಡೆಗಳಲ್ಲಿ ಹೋಗಿರುತ್ತದೆ, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿವೆ.”</verse>
				<verse number="19">ಆದರೆ ಇಸ್ರಾಯೇಲರಿಗೆ ಅರ್ಥವಾಗಲಿಲ್ಲವೇ? ಎಂದು ನಾನು ಪ್ರಶ್ನಿಸುತ್ತೇನೆ. ಮೊದಲನೆಯದಾಗಿ ಮೋಶೆಯು, “ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. ತಿಳುವಳಿಕೆಯಿಲ್ಲದ ಜನಾಂಗದವರ ಮೂಲಕ ನೀವು ಕೋಪಗೊಳ್ಳುವಂತೆ ಮಾಡುವೆನು,” ಎಂದು ಹೇಳುತ್ತಾನೆ.</verse>
				<verse number="20">ಆದರೆ ಯೆಶಾಯನು ಬಹು ಧೈರ್ಯವಾಗಿ, “ನನ್ನನ್ನು ಹುಡುಕದವರಿಗೆ ನಾನು ಸಿಕ್ಕಿದೆನು. ನನ್ನ ವಿಷಯವಾಗಿ ವಿಚಾರ ಮಾಡದವರಿಗೂ ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.</verse>
				<verse number="21">ಆದರೆ ಇಸ್ರಾಯೇಲರ ಕುರಿತಾಗಿ, “ನನಗೆ ಅವಿಧೇಯರೂ ಎದುರುಮಾತಾಡುವವರೂ ಆಗಿರುವ ಜನರಿಗೆ, ದಿನವೆಲ್ಲಾ ನಾನು ಕೈಚಾಚಿ ಕರೆದೆನು,” ಎಂದು ಹೇಳುತ್ತಾನೆ.</verse>
			</chapter>
			<chapter number="11">
				<verse number="1">ಹಾಗಾದರೆ, ದೇವರು ತಮ್ಮ ಜನರನ್ನು ತ್ಯಜಿಸಿಬಿಟ್ಟಿದ್ದಾರೋ ಎಂದು ಕೇಳುತ್ತೇನೆ? ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲನೂ ಅಬ್ರಹಾಮನ ವಂಶದವನೂ ಬೆನ್ಯಾಮೀನನ ಕುಲದವನೂ ಆಗಿದ್ದೇನೆ.</verse>
				<verse number="2">ದೇವರು ತಾವು ಮುಂದಾಗಿ ತಿಳಿದುಕೊಂಡ ತಮ್ಮ ಜನರನ್ನು ತ್ಯಜಿಸಲಿಲ್ಲ. ದೇವರ ವಾಕ್ಯವು ಎಲೀಯನನ್ನು ಕುರಿತು ಏನು ಹೇಳುತ್ತದೆಂದು ನಿಮಗೆ ಗೊತ್ತಿಲ್ಲವೋ?</verse>
				<verse number="3">“ಕರ್ತಾ, ಅವರು ನಿಮ್ಮ ಪ್ರವಾದಿಗಳನ್ನು ಕೊಂದಿದ್ದಾರೆ. ನಿಮ್ಮ ಬಲಿಪೀಠವನ್ನು ಒಡೆದುಹಾಕಿದ್ದಾರೆ, ನಾನು ಒಬ್ಬನೇ ಉಳಿದಿದ್ದೇನೆ. ಅವರು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ,” ಎಂದು ಇಸ್ರಾಯೇಲರಿಗೆ ವಿರೋಧವಾಗಿ ದೇವರಲ್ಲಿ ವಿಜ್ಞಾಪನೆ ಮಾಡಿಕೊಂಡನು.</verse>
				<verse number="4">ಅದಕ್ಕೆ ದೇವರು ಅವನಿಗೆ ಕೊಟ್ಟ ಉತ್ತರವೇನಾಗಿತ್ತು? “ಬಾಳನಿಗೆ ಅಡ್ಡಬೀಳದ ಏಳು ಸಾವಿರ ಮಂದಿಯನ್ನು ನನಗೋಸ್ಕರ ಉಳಿಸಿದ್ದೇನೆ,” ಎಂದಲ್ಲವೇ?</verse>
				<verse number="5">ಅದೇ ರೀತಿಯಲ್ಲಿ, ಈ ಕಾಲದಲ್ಲಿಯೂ ಕೃಪೆಯಿಂದ ಆಯ್ಕೆಯಾದ ಇಸ್ರಾಯೇಲರಲ್ಲಿ ಕೆಲವರು ಉಳಿದಿದ್ದಾರೆ.</verse>
				<verse number="6">ಆ ಆಯ್ಕೆಯು ಕ್ರಿಯೆಗಳ ಆಧಾರದಿಂದಲ್ಲ, ಕೃಪೆಯಿಂದಲೇ ಆಗಿರುತ್ತದೆ. ಕ್ರಿಯೆಗಳಿಂದ ಅದು ಆಗಿದ್ದರೆ ಇನ್ನೆಂದಿಗೂ ಕೃಪೆಯಾಗಲಾರದು.</verse>
				<verse number="7">ಹಾಗಾದರೆ ಏನು? ಇಸ್ರಾಯೇಲ್ ಹುಡುಕಿದ್ದನ್ನು ಹೊಂದಲಿಲ್ಲ. ಆದರೆ ಅವರಲ್ಲಿ ಆಯ್ಕೆಯಾದವರು ಹೊಂದಿದರು, ಮಿಕ್ಕವರು ಕಠಿಣ ಹೃದಯಿಗಳಾದರು.</verse>
				<verse number="8">ಪವಿತ್ರ ವೇದದಲ್ಲಿ ಬರೆದಿರುವಂತೆ, “ದೇವರು ಅವರಿಗೆ ಜಡಸ್ವಭಾವದ ಆತ್ಮವನ್ನು, ಕಾಣಲಾರದ ಕಣ್ಣನ್ನು ಮತ್ತು ಕೇಳಲಾರದ ಕಿವಿಯನ್ನು ಕೊಟ್ಟರು, ಅದು ಇಂದಿನವರೆಗೂ ಹಾಗೆಯೇ ಇದೆ.”</verse>
				<verse number="9">ದಾವೀದನು, “ಅವರ ಊಟವೇ ಅವರಿಗೆ ಉರುಲೂ ಬೋನೂ ಆಗಲಿ. ಅದು ಅಡೆತಡೆಯೂ ಪ್ರತಿಕಾರವೂ ಆಗಲಿ.</verse>
				<verse number="10">ಅವರ ಕಣ್ಣುಗಳು ಕಾಣದ ಹಾಗೆ ಕತ್ತಲಾಗಲಿ. ಮತ್ತು ಅವರ ಬೆನ್ನು ಎಂದೆಂದಿಗೂ ಬಗ್ಗಿ ಹೋಗಲಿ,” ಎಂದು ಹೇಳುತ್ತಾನೆ.</verse>
				<verse number="11">ಇಸ್ರಾಯೇಲರು ಏಳಲಾರದ ಹಾಗೇ ಎಡವಿದರೋ? ಎಂದು ನಾನು ಕೇಳುತ್ತೇನೆ. ಇಲ್ಲವೇ ಇಲ್ಲ! ಆದರೆ, ಇಸ್ರಾಯೇಲರಲ್ಲಿ ಮತ್ಸರ ಉಂಟಾಗುವಂತೆ ಅವರ ಅಪರಾಧದ ನಿಮಿತ್ತ ಯೆಹೂದ್ಯರಲ್ಲದವರಿಗೆ ರಕ್ಷಣೆಯು ಉಂಟಾಯಿತು.</verse>
				<verse number="12">ಆದರೆ ಅವರ ಅಪರಾಧವು ಜಗತ್ತಿಗೆ ಐಶ್ವರ್ಯವನ್ನು ಉಂಟುಮಾಡಿತು. ಅವರ ನಷ್ಟವೇ ಯೆಹೂದ್ಯರಲ್ಲದವರಿಗೆ ಐಶ್ವರ್ಯವನ್ನು ಉಂಟುಮಾಡುವುದಾದರೆ, ಅವರ ಪರಿಪೂರ್ಣತೆಯು ಇನ್ನೂ ಎಷ್ಟೋ ಹೆಚ್ಚಾದ ಐಶ್ವರ್ಯವನ್ನು ಉಂಟುಮಾಡಬಹುದಲ್ಲವೇ!</verse>
				<verse number="13">ಯೆಹೂದ್ಯರಲ್ಲದವರಾಗಿರುವ ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ನಾನು ಯೆಹೂದ್ಯರಲ್ಲದವರಿಗೆ ಅಪೊಸ್ತಲನಾಗಿರುವಷ್ಟರ ಮಟ್ಟಿಗೆ ನನ್ನ ಸೇವೆಯನ್ನು ಪ್ರಭಾವಗೊಳಿಸುತ್ತೇನೆ.</verse>
				<verse number="14">ಹೇಗೂ ನಾನು ನನ್ನ ಸ್ವಂತ ಜನರಾದ ಯೆಹೂದ್ಯರಲ್ಲಿ ಮತ್ಸರವನ್ನು ಉದ್ರೇಕಿಸಿ ಅವರಲ್ಲಿ ಕೆಲವರನ್ನಾದರೂ ರಕ್ಷಿಸಬೇಕು.</verse>
				<verse number="15">ಏಕೆಂದರೆ ಇಸ್ರಾಯೇಲರನ್ನು ತ್ಯಜಿಸುವುದರಿಂದ ಜಗತ್ತು ದೇವರೊಡನೆ ಸಂಧಾನವಾಗುವುದಾದರೆ, ಅವರನ್ನು ಸ್ವೀಕರಿಸುವುದು, ಸತ್ತವರು ಜೀವಿತರಾಗಿ ಎದ್ದು ಬಂದಂತಾಗಿರುವುದಲ್ಲವೇ?</verse>
				<verse number="16">ಪ್ರಥಮಫಲವಾಗಿ ಹಿಟ್ಟಿನಲ್ಲಿ ದೇವರಿಗೆ ಭಾಗವನ್ನು ಸಮರ್ಪಿಸಿದ್ದು ಪವಿತ್ರವಾಗಿದ್ದರೆ, ಹಿಟ್ಟೆಲ್ಲಾ ಪವಿತ್ರವಾಗಿರುತ್ತದೆ. ಬೇರು ಪವಿತ್ರವಾಗಿದ್ದರೆ, ಕೊಂಬೆಗಳೂ ಪವಿತ್ರವಾಗಿರುತ್ತವೆ?</verse>
				<verse number="17">ಕೆಲವು ಕೊಂಬೆಗಳು ಮುರಿದುಹೋಗಿರುವುದಾದರೆ, ಕಾಡು ಓಲಿವ್ ಮರದಂತಿರುವ ನೀನು ಅವುಗಳ ನಡುವೆ ಕಸಿಮಾಡಿ ಉತ್ತಮ ಓಲಿವ್ ಮರದ ರಸವತ್ತಾದ ಬೇರಿನಲ್ಲಿ ಪಾಲುಹೊಂದಿರಲಾಗಿ,</verse>
				<verse number="18">ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ. ಹೆಚ್ಚಿಸಿಕೊಂಡರೆ, ನೀನು ಆ ಬೇರಿನ ಆಧಾರವಲ್ಲ. ಆ ಬೇರೇ ನಿನಗೆ ಆಧಾರವಾಗಿದೆ.</verse>
				<verse number="19">ಹಾಗಾದರೆ ನೀನು, “ನಾನು ಕಸಿಕಟ್ಟಿಸಿಕೊಳ್ಳಬೇಕೆಂದು ಆ ಕೊಂಬೆಗಳನ್ನು ಮುರಿದು ಹಾಕಲಾಯಿತು,” ಎಂದು ನೀನು ಹೇಳಬಹುದು.</verse>
				<verse number="20">ಅದು ನಿಜವೆ, ಆದರೆ ಅವರ ಅವಿಶ್ವಾಸದಿಂದಲೇ ಅವರನ್ನು ಮುರಿದು ಹಾಕಲಾಯಿತು. ನೀನಾದರೋ ವಿಶ್ವಾಸದಿಂದಲೇ ಇನ್ನೂ ನಿಂತಿರುವೆ. ಗರ್ವಪಡದೆ ಭಯದಿಂದಿರು.</verse>
				<verse number="21">ಏಕೆಂದರೆ ದೇವರು ಹುಟ್ಟು ಕೊಂಬೆಗಳನ್ನು ಉಳಿಸದಿದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.</verse>
				<verse number="22">ಆದ್ದರಿಂದ, ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು. ಬಿದ್ದವರ ಕಡೆಗೆ ಅವರ ಕಾಠಿಣ್ಯವಿದೆ, ನೀನು ದೇವರ ದಯೆಯಲ್ಲಿಯೇ ಮುಂದುವರಿಯುವುದಾದರೆ ನಿನ್ನ ಮೇಲೆ ದೇವರ ದಯೆಯಿರುವುದು. ಇಲ್ಲದೆ ಹೋದರೆ, ನೀನು ಕೂಡ ಕಡಿದುಹಾಕಲಾಗುವೆ.</verse>
				<verse number="23">ಇಸ್ರಾಯೇಲರು ಕೂಡ ಇನ್ನೂ ಅವಿಶ್ವಾಸದಲ್ಲಿ ಮುಂದುವರಿಯದಿದ್ದರೆ, ಕಸಿಕಟ್ಟಲಾಗುವರು, ಏಕೆಂದರೆ ಅವರನ್ನು ಪುನಃ ಕಸಿಕಟ್ಟಲು ದೇವರು ಶಕ್ತರಾಗಿರುತ್ತಾರೆ.</verse>
				<verse number="24">ಎಷ್ಟಾದರೂ ಕಾಡು ಓಲಿವ್ ಮರದಿಂದ ನೀನು ಕಡಿದುಹಾಕಲಾದ ಕೊಂಬೆ. ನೀನು ನೆಟ್ಟು ಬೆಳೆಸಿರುವ ಉತ್ತಮ ಓಲಿವ್ ಮರಕ್ಕೆ ಅಸ್ವಾಭಾವಿಕವಾಗಿ ಕಸಿಮಾಡುವುದಾದರೆ ಸ್ವಾಭಾವಿಕವಾಗಿರುವ ಈ ಕೊಂಬೆಗಳನ್ನು ಎಷ್ಟೋ ಹೆಚ್ಚಾಗಿ ಓಲಿವ್ ಮರಕ್ಕೆ ಅದೇ ಕಸಿಕಟ್ಟುವುದು ಸುಲಭವಲ್ಲವೇ?</verse>
				<verse number="25">ಪ್ರಿಯರೇ, ನೀವು ಈ ಮರ್ಮದ ಬಗ್ಗೆ ಅಜ್ಞಾನಿಗಳಾಗಿರಬೇಕೆಂದು ನಾನು ಬಯಸುವುದಿಲ್ಲ. ಅದೇನೆಂದರೆ, ಯೆಹೂದ್ಯರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವವರೆಗೆ ಮಾತ್ರ ಇಸ್ರಾಯೇಲರು ತಮ್ಮ ಹೃದಯದ ಕಾಠಿಣ್ಯಕ್ಕೆ ತಾತ್ಕಾಲಿಕವಾಗಿ ಒಳಗಾಗಿರುವರು.</verse>
				<verse number="26">ಹೀಗೆ ಪವಿತ್ರ ವೇದದಲ್ಲಿ ಬರೆದಿರುವಂತೆ, ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು: “ವಿಮೋಚಿಸುವವರು ಒಬ್ಬರು ಚೀಯೋನಿನಿಂದ ಬರುತ್ತಾರೆ, ಅವರು ಯಾಕೋಬನ ಸಂತತಿಯಲ್ಲಿ ದೇವರನ್ನು ಅಲ್ಲಗಳೆಯುವ ಸ್ವಭಾವನ್ನು ತಾವೇ ತೆಗೆದುಹಾಕುವರು.</verse>
				<verse number="27">ನಾನು ಅವರ ಪಾಪಗಳನ್ನು ತೆಗೆದುಹಾಕುವಾಗ, ಅವರೊಂದಿಗೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ ಎಂದು ತಿಳಿದುಕೊಳ್ಳುವೆನು,” ಎಂಬುದೇ.</verse>
				<verse number="28">ಸುವಾರ್ತೆಯ ಪ್ರಕಾರ ಇಸ್ರಾಯೇಲರು ಈಗ ನಿಮ್ಮ ನಿಮಿತ್ತ ಶತ್ರುಗಳು. ಆದರೆ ದೇವರ ಆಯ್ಕೆಯ ದೃಷ್ಟಿಯಲ್ಲಿ ನೋಡುವಾಗ ಮೂಲಪಿತೃಗಳ ನಿಮಿತ್ತದಿಂದ ಅವರು ಪ್ರೀತಿಹೊಂದಿದವರು.</verse>
				<verse number="29">ದೇವರು ಕೊಡುವ ವರಗಳನ್ನು, ಕರೆಗಳನ್ನು ಅವರು ಎಂದಿಗೂ ಹಿಂತೆಗೆದುಕೊಳ್ಳುವವರಲ್ಲ.</verse>
				<verse number="30">ಒಂದು ಕಾಲದಲ್ಲಿ ದೇವರಿಗೆ ಅವಿಧೇಯರಾಗಿದ್ದ ನೀವು ಇಸ್ರಾಯೇಲರ ಅವಿಧೇಯತೆಯಿಂದ ಈಗ ಕರುಣೆಯನ್ನು ಹೊಂದಿರುವಿರಿ.</verse>
				<verse number="31">ಅದೇ ಪ್ರಕಾರವಾಗಿ ಇಸ್ರಾಯೇಲರು ಈಗ ಅವಿಧೇಯರಾಗಿದ್ದರೂ ನಿಮಗೆ ಕರುಣೆ ದೊರಕಿದಂತೆ, ಅವರಿಗೂ ಈಗ ಕರುಣೆ ದೊರಕುವುದು.</verse>
				<verse number="32">ದೇವರು ತಾವು ಎಲ್ಲರಿಗೂ ಕರುಣೆ ತೋರಿಸುವುದಕ್ಕಾಗಿ ಎಲ್ಲರನ್ನೂ ಅವಿಧೇಯತೆಯಲ್ಲಿ ಕಟ್ಟಿಹಾಕಿರುತ್ತಾರೆ.</verse>
				<verse number="33">ಆಹಾ! ದೇವರ ಐಶ್ವರ್ಯ, ಜ್ಞಾನ ಮತ್ತು ವಿವೇಕಗಳು ಎಷ್ಟು ಆಳವಾದವುಗಳು! ದೇವರ ತೀರ್ಮಾನಗಳು ಪರೀಶೀಲಿಸಲು ಅಸಾಧ್ಯವಾದದ್ದು! ದೇವರ ಮಾರ್ಗಗಳನ್ನು ಕಂಡುಹಿಡಿಯುವುದು ಅಪರಿಮಿತವಾದದ್ದು!</verse>
				<verse number="34">“ಕರ್ತದೇವರ ಮನಸ್ಸನ್ನು ಅರಿತವರು ಯಾರು? ಅವರಿಗೆ ಆಲೋಚನೆಯನ್ನು ನೀಡುವವರು ಯಾರು?”</verse>
				<verse number="35">“ದೇವರಿಗೆ ಮೊದಲು ಕೊಟ್ಟು, ಅವರಿಂದ ಪ್ರತಿಫಲವನ್ನು ಪಡೆಯುವವರು ಯಾರು?”</verse>
				<verse number="36">ಏಕೆಂದರೆ ಸಮಸ್ತವೂ ದೇವರಿಂದ ಉಂಟಾಗಿ ದೇವರ ಮೂಲಕವಾಗಿಯೂ ದೇವರಿಗಾಗಿಯೂ ಇರುತ್ತವೆ. ಮಹಿಮೆಯು ಸದಾಕಾಲವೂ ದೇವರಿಗೇ ಸಲ್ಲುವುದಾಗಿರಲಿ. ಆಮೆನ್.</verse>
			</chapter>
			<chapter number="12">
				<verse number="1">ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.</verse>
				<verse number="2">ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.</verse>
				<verse number="3">ನನಗೆ ದಯಪಾಲಿಸಿರುವ ಕೃಪೆಯಿಂದ ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಾನು ಹೇಳುವುದೇನೆಂದರೆ, ನೀವು ಭಾವಿಸುವುದಕ್ಕಿಂತ ಹೆಚ್ಚಾಗಿ ಯಾರೂ ನಿಮ್ಮನ್ನು ನೀವೇ ಉನ್ನತವಾಗಿ ಭಾವಿಸಿಕೊಳ್ಳಬೇಡಿರಿ. ಅದರ ಬದಲಾಗಿ ದೇವರು ನಿಮಗೆ ಅನುಗ್ರಹಿಸಿರುವ ವಿಶ್ವಾಸದ ಅಳತೆಗೆ ಅನುಸಾರವಾಗಿ ಸ್ವಸ್ಥಚಿತ್ತವುಳ್ಳವರಾಗಿ ಭಾವಿಸಿಕೊಳ್ಳಿರಿ.</verse>
				<verse number="4">ನಮ್ಮಲ್ಲಿ ಪ್ರತಿಯೊಬ್ಬನಿಗೂ ಅನೇಕ ಅಂಗಗಳಿಂದ ಕೂಡಿದ ಒಂದು ದೇಹವಿರುವ ಹಾಗೆಯೇ ಮತ್ತು ಹೇಗೆ ಈ ಅಂಗಾಂಗಗಳಿಗೆಲ್ಲಾ ಒಂದೇ ಕೆಲಸವಿರುವುದ್ಲಿಲವೋ,</verse>
				<verse number="5">ಅದೇ ರೀತಿಯಲ್ಲಿ, ಅನೇಕರಾಗಿರುವ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗುತ್ತೇವೆ ಮತ್ತು ಪ್ರತಿಯೊಬ್ಬನೂ ಒಬ್ಬರಿಗೊಬ್ಬರು ಅಂಗಗಳಾಗಿರುತ್ತೇವೆ.</verse>
				<verse number="6">ನಮಗೆ ಕೊಟ್ಟಿರುವ ದೇವರ ಕೃಪೆಗೆ ಅನುಸಾರವಾಗಿ ನಮಗೆ ಬೇರೆ ಬೇರೆ ವರಗಳಿರುತ್ತವೆ. ಒಬ್ಬನಿಗೆ ಪ್ರವಾದನಾ ವರವಾಗಿದ್ದರೆ, ಅದನ್ನು ಅವನ ವಿಶ್ವಾಸದ ಅಳತೆಗೆ ತಕ್ಕ ರೀತಿಯಲ್ಲಿ ಉಪಯೋಗಿಸಲಿ.</verse>
				<verse number="7">ಅದು ಇತರರಿಗೆ ಸೇವೆ ಸಲ್ಲಿಸುವುದಾಗಿದ್ದರೆ, ಅದನ್ನು ಇತರರಿಗೆ ಸೇವೆ ಸಲ್ಲಿಸುವುದರಲ್ಲಿ ಉಪಯೋಗಿಸಲಿ. ಅದು ಬೋಧಿಸುವ ವರವಾಗಿದ್ದರೆ, ಅವನು ಬೋಧಿಸಲಿ.</verse>
				<verse number="8">ಅದು ಪ್ರೋತ್ಸಾಹಗೊಳಿಸುವುದಾಗಿದ್ದರೆ, ಅವನು ಪ್ರೋತ್ಸಾಹಗೊಳಿಸಲಿ. ದಾನಕೊಡುವ ವರವಾಗಿದ್ದರೆ, ಅವನು ಧಾರಾಳವಾಗಿ ಕೊಡಲಿ. ನಾಯಕತ್ವ ವಹಿಸುವ ವರವಾಗಿದ್ದರೆ, ಅವನು ಶ್ರದ್ಧೆಯಿಂದ ಮಾಡಲಿ ದಯೆ ತೋರಿಸುವ ವರವಾಗಿದ್ದರೆ ಅದನ್ನು ಅವನು ಸಂತೋಷದಿಂದ ಮಾಡಲಿ.</verse>
				<verse number="9">ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿ ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.</verse>
				<verse number="10">ಒಬ್ಬರಿಗೊಬ್ಬರು ಸಹೋದರ ಪ್ರೀತಿಯಲ್ಲಿ ಸಮರ್ಪಿತರಾಗಿರಿ. ಗೌರವಿಸುವುದರಲ್ಲಿ ಒಬ್ಬರಿಗೊಬ್ಬರು ಮುಂದಾಗಿರಿ.</verse>
				<verse number="11">ಉತ್ಸಾಹದಲ್ಲಿ ಆಲಸ್ಯರಾಗದೆ, ಆತ್ಮದಲ್ಲಿ ಬೆಂಕಿಯುಳ್ಳವರಾಗಿ ಕರ್ತನ ಸೇವೆಯನ್ನು ಮಾಡಿರಿ.</verse>
				<verse number="12">ನಿರೀಕ್ಷೆಯಲ್ಲಿ ಸಂತೋಷವುಳ್ಳವರೂ ಸಂಕಟಗಳಲ್ಲಿ ಸಹನೆಯುಳ್ಳವರೂ ಪ್ರಾರ್ಥನೆಯಲ್ಲಿ ದೃಢಮನಸ್ಸುಳ್ಳವರೂ ಆಗಿ ಮುಂದುವರಿಯಿರಿ.</verse>
				<verse number="13">ಕೊರತೆ ಇರುವ ದೇವಜನರೊಂದಿಗೆ ನಿಮಗೆ ಇರುವುದನ್ನು ಹಂಚಿಕೊಳ್ಳಿರಿ, ಅತಿಥಿ ಸತ್ಕಾರವನ್ನು ಮಾಡುತ್ತಾ ಇರಿ.</verse>
				<verse number="14">ನಿಮ್ಮನ್ನು ಹಿಂಸಿಸುವರನ್ನು ಆಶೀರ್ವದಿಸಿರಿ, ಶಪಿಸಬೇಡಿರಿ.</verse>
				<verse number="15">ಸಂತೋಷ ಪಡುವವರೊಂದಿಗೆ ಸಂತೋಷಪಡಿರಿ, ಅಳುವವರೊಂದಿಗೆ ಅಳಿರಿ.</verse>
				<verse number="16">ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳವರಾಗಿರಿ. ನೀವು ಮನಸ್ಸಿನಲ್ಲಿ ಅಹಂಕಾರಿಗಳಾಗಿರದೆ, ದೀನರೊಂದಿಗೆ ಸಂತೋಷದಿಂದ ಸಹಭಾಗಿಗಳಾಗಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.</verse>
				<verse number="17">ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿಯೂ ಒಳ್ಳೆಯದನ್ನು ಮಾಡಿರಿ.</verse>
				<verse number="18">ಸಾಧ್ಯವಾದರೆ, ನಿಮ್ಮಿಂದ ಆದಷ್ಟು ಎಲ್ಲರೊಂದಿಗೂ ಸಮಾಧಾನದಿಂದಿರಿ.</verse>
				<verse number="19">ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸದೆ, ಅದನ್ನು ದೇವರ ಕೋಪಕ್ಕೆ ಬಿಟ್ಟುಬಿಡಿರಿ. ಏಕೆಂದರೆ, “ಮುಯ್ಯಿ ತೀರಿಸುವುದು ನನಗೆ ಸೇರಿದ್ದು. ನಾನು ಅದನ್ನು ತೀರಿಸುವೆನು, ಎಂದು ಕರ್ತನು ಹೇಳುತ್ತಾರೆ,” ಎಂದು ಪವಿತ್ರ ವೇದದಲ್ಲಿ ಬರೆಯಲಾಗಿದೆ.</verse>
				<verse number="20">“ಆದರೆ, ನಿನ್ನ ವೈರಿಯು ಹಸಿದಿದ್ದರೆ, ಅವನಿಗೆ ಆಹಾರ ಕೊಡು, ಅವನು ಬಾಯಾರಿದ್ದರೆ ಕುಡಿಯಲು ಕೊಡು. ಹೀಗೆ ಮಾಡುವುದರಿಂದ ನೀನು ಅವನ ತಲೆಯ ಮೇಲೆ ಉರಿಯುವ ಕೆಂಡವನ್ನು ಸುರಿದಂತಾಗುವುದು.”</verse>
				<verse number="21">ಕೆಟ್ಟದ್ದಕ್ಕೆ ಸೋಲಬೇಡಿರಿ, ಕೆಟ್ಟದ್ದನ್ನು ಒಳ್ಳೆಯದರಿಂದ ಜಯಿಸಿರಿ.</verse>
			</chapter>
			<chapter number="13">
				<verse number="1">ಪ್ರತಿಯೊಬ್ಬನೂ ಮೇಲಧಿಕಾರಿಗಳಿಗೆ ಅಧೀನನಾಗಿರಬೇಕು, ಏಕೆಂದರೆ ದೇವರು ನೇಮಿಸಿದ ಅಧಿಕಾರದ ಹೊರತು ಬೇರೆ ಯಾವದೂ ಇರುವುದಿಲ್ಲ. ಇರುವ ಅಧಿಕಾರಗಳು ದೇವರಿಂದಲೇ ನೇಮಕಗೊಂಡಿವೆ.</verse>
				<verse number="2">ಆದ್ದರಿಂದ ಅಧಿಕಾರಕ್ಕೆ ಎದುರು ಬೀಳುವವನು ದೇವರ ನೇಮಕವನ್ನು ಎದುರಿಸುವವನಾಗಿರುತ್ತಾನೆ. ಹಾಗೆ ಎದುರಿಸುವವರು ತೀರ್ಪಿಗೆ ಗುರಿಯಾಗುವರು.</verse>
				<verse number="3">ಕೆಟ್ಟದ್ದನ್ನು ಮಾಡುವವನಿಗೆ ಅಧಿಪತಿಗಳ ಭಯವಿರುವುದೇ ಹೊರತು, ಒಳ್ಳೆಯದನ್ನು ಮಾಡುವವನಿಗೆ ಅಲ್ಲ. ಅಧಿಕಾರಿಗಳಿಗೆ ಭಯಪಡಬಾರದೇ? ಒಳ್ಳೆಯದನ್ನು ಮಾಡು. ಅದರಿಂದ ನಿನಗೆ ಪ್ರಶಂಸೆ ದೊರಕುವುದು.</verse>
				<verse number="4">ಏಕೆಂದರೆ, ಅವನು ನಿನಗೆ ಒಳ್ಳೆಯದನ್ನು ಮಾಡುವುದಕ್ಕೋಸ್ಕರ ಇರುವ ದೇವರ ಸೇವಕನಾಗಿರುತ್ತಾನೆ. ಆದರೆ ನೀನು ಕೆಟ್ಟದ್ದನ್ನು ಮಾಡುವವನಾಗಿದ್ದರೆ ಭಯಪಡಬೇಕು. ಏಕೆಂದರೆ ಅವನು ವ್ಯರ್ಥವಾಗಿ ಅಧಿಕಾರವನ್ನು ಪಡೆದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಅಭ್ಯಾಸ ಮಾಡುವವನಿಗೆ ದಂಡನೆಯನ್ನು ವಿಧಿಸುತ್ತಾನೆ.</verse>
				<verse number="5">ಆದ್ದರಿಂದ, ಭಯದ ನಿಮಿತ್ತದಿಂದ ಮಾತ್ರವಲ್ಲ ಮನಸ್ಸಾಕ್ಷಿಯ ನಿಮಿತ್ತವೂ ಅಧಿಕಾರಿಗಳಿಗೆ ಅಧೀನನಾಗಿರುವುದು ಅಗತ್ಯವಾಗಿರುತ್ತದೆ.</verse>
				<verse number="6">ಇದರ ನಿಮಿತ್ತವಾಗಿಯೇ ನೀವು ತೆರಿಗೆಯನ್ನು ಪಾವತಿ ಮಾಡುತ್ತೀರಿ. ಏಕೆಂದರೆ, ಅಧಿಕಾರಿಗಳು ಇದರಲ್ಲಿಯೇ ನಿರತರಾಗಿರುವ ದೇವರ ಸೇವಕರಾಗಿರುತ್ತಾರೆ.</verse>
				<verse number="7">ನೀವು ಯಾರಿಗೆ ಏನು ಸಲ್ಲಿಸಬೇಕೋ ಅದನ್ನು ಸಲ್ಲಿಸಿರಿ. ತೆರಿಗೆ ಕಟ್ಟಬೇಕಾಗಿದ್ದರೆ ತೆರಿಗೆಯನ್ನು, ಸುಂಕ ಕೊಡಬೇಕಾಗಿದ್ದರೆ ಸುಂಕವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆಯನ್ನು, ಗೌರವ ಸಲ್ಲಿಸಬೇಕಾಗಿದ್ದರೆ ಗೌರವವನ್ನು ಸಲ್ಲಿಸಿರಿ.</verse>
				<verse number="8">ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಸಾಲವೇ ಹೊರತು ನಿಮಗೆ ಬೇರೆ ಯಾವ ಸಾಲವೂ ಇರಬಾರದು. ಏಕೆಂದರೆ ಮತ್ತೊಬ್ಬರನ್ನು ಪ್ರೀತಿಸುವವನು ಮೋಶೆಯ ನಿಯಮವನ್ನೇ ನೆರವೇರಿಸಿದ್ದಾನೆ.</verse>
				<verse number="9">ಏಕೆಂದರೆ, “ವ್ಯಭಿಚಾರ ಮಾಡಬೇಡ, ಕೊಲೆ ಮಾಡಬೇಡ, ಕದಿಯಬೇಡ, ದುರಾಶೆ ಪಡಬೇಡ,” ಎನ್ನುವ ಹಾಗೂ ಇತರ ಯಾವ ಆಜ್ಞೆಗಳೇ ಇರಲಿ ಅವೆಲ್ಲವೂ, “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು,” ಎಂಬ ಒಂದೇ ಮಾತಿನಲ್ಲಿವೆ.</verse>
				<verse number="10">ಪ್ರೀತಿಯು ತನ್ನ ನೆರೆಯವನಿಗೆ ಹಾನಿ ಮಾಡುವುದಿಲ್ಲ. ಆದ್ದರಿಂದ ಪ್ರೀತಿಯು ನಿಯಮದ ನೆರವೇರಿಕೆಯಾಗಿರುತ್ತದೆ.</verse>
				<verse number="11">ಈಗಿನ ಕಾಲವನ್ನು ತಿಳಿದು ಇದನ್ನೆಲ್ಲಾ ಮಾಡಿರಿ. ನೀವು ನಿದ್ರೆಯಿಂದ ಎಚ್ಚರಗೊಳ್ಳುವ ಗಳಿಗೆಯಾಗಿದೆ. ಏಕೆಂದರೆ, ನಮ್ಮ ರಕ್ಷಣೆಯು ನಾವು ಮೊದಲು ವಿಶ್ವಾಸವಿಟ್ಟಿದಕ್ಕಿಂತ ಈಗ ಹತ್ತಿರವಾಗಿರುತ್ತದೆ.</verse>
				<verse number="12">ರಾತ್ರಿಯು ಬಹಳಷ್ಟು ಕಳೆದು ಹಗಲು ಸಮೀಪಿಸಿದೆ. ಆದ್ದರಿಂದ ನಾವು ಕತ್ತಲೆಯ ಕೃತ್ಯಗಳನ್ನು ಎಸೆದು ಬೆಳಕಿನ ಆಯುಧಗಳನ್ನು ಧರಿಸಿಕೊಳ್ಳೋಣ.</verse>
				<verse number="13">ಪಕ್ಷತನ ಕುಡಿಕತನಗಳಲ್ಲಾಗಲಿ, ಕಾಮವಿಲಾಸ ನಿರ್ಲಜ್ಯ ಕೃತ್ಯಗಳಲ್ಲಾಗಲಿ, ಮತ್ಸರಗಳಲ್ಲಾಗಲಿ ನಿರತರಾಗಿರದೆ ಹಗಲಿನಲ್ಲಿರುವವರಂತೆ ಸಭ್ಯತೆಯಿಂದ ನಡೆದುಕೊಳ್ಳೋಣ.</verse>
				<verse number="14">ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಧರಿಸಿಕೊಳ್ಳಿರಿ. ದೈಹಿಕ ಆಶೆಗಳನ್ನು ನೆರವೇರಿಸಲು ಯೋಚಿಸಬೇಡಿರಿ.</verse>
			</chapter>
			<chapter number="14">
				<verse number="1">ಅಂಥವನ ಅಭಿಪ್ರಾಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ. ವಿಶ್ವಾಸದಲ್ಲಿ ಬಲಹೀನನಾಗಿರುವವನನ್ನು ಸ್ವೀಕರಿಸಿಕೊಳ್ಳಿರಿ.</verse>
				<verse number="2">ಒಬ್ಬನ ವಿಶ್ವಾಸವು ಎಲ್ಲವನ್ನೂ ತಿನ್ನುವಂತೆ ಮಾಡುತ್ತದೆ. ಆದರೆ ವಿಶ್ವಾಸದಲ್ಲಿ ಬಲಹೀನನಾಗಿರುವವನು ಸಸ್ಯಾಹಾರಿಯಾಗಿಯೇ ಇರುತ್ತಾನೆ.</verse>
				<verse number="3">ಮಾಂಸಾಹಾರಿಯು ಸಸ್ಯಾಹಾರಿಯನ್ನು ಹೀನೈಸದಿರಲಿ. ಸಸ್ಯಾಹಾರಿಯು ಮಾಂಸಾಹಾರಿಯನ್ನು ತೀರ್ಪು ಮಾಡದಿರಲಿ. ಏಕೆಂದರೆ ದೇವರು ಇಬ್ಬರನ್ನು ಸ್ವೀಕಾರ ಮಾಡಿರುತ್ತಾರೆ.</verse>
				<verse number="4">ಬೇರೊಬ್ಬನ ಮನೆಗೆಲಸದವನನ್ನು ತೀರ್ಪುಮಾಡಲು ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೆ ಸೇರಿದ್ದು. ಅವನನ್ನು ನಿಲ್ಲುವಂತೆ ಮಾಡಲು ಕರ್ತನು ಶಕ್ತನಾಗಿರುವುದರಿಂದ ಅವನು ಎದ್ದು ನಿಲ್ಲುವನು.</verse>
				<verse number="5">ಕೆಲವರು ಒಂದು ದಿನವನ್ನು ಮತ್ತೊಂದು ದಿನಕ್ಕಿಂತ ವಿಶೇಷವೆಂದು ಎಣಿಸುತ್ತಾರೆ. ಪ್ರತಿಯೊಬ್ಬರೂ ತಮ್ಮ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಂತೆ ನಡೆಯಲಿ.</verse>
				<verse number="6">ಒಬ್ಬ ಒಂದು ದಿನವನ್ನು ವಿಶೇಷವೆಂದು ಎಣಿಸುವುದಾದರೆ ಅವನು ಅದನ್ನು ಕರ್ತನಿಗಾಗಿಯೇ ಮಾಡಲಿ. ಮಾಂಸಾಹಾರಿಯು ದೇವರಿಗೆ ಕೃತಜ್ಞತೆಯನ್ನು ಮಾಡಿ ಊಟಮಾಡುವುದಾದರೆ ಅವನು ಅದನ್ನು ಮಾಡುವುದು ಕರ್ತನಿಗಾಗಿಯೇ. ಸಸ್ಯಾಹಾರಿಯು ಕರ್ತನಿಗಾಗಿಯೇ ತಿನ್ನದೆ ಕೃತಜ್ಞತೆ ಸಲ್ಲಿಸುತ್ತಾನೆ.</verse>
				<verse number="7">ನಮ್ಮಲ್ಲಿ ಯಾರೂ ತಮಗಾಗಿ ಜೀವಿಸದಿರಲಿ, ತಮಗಾಗಿ ಮರಣಿಸುವುದು ಬೇಡ.</verse>
				<verse number="8">ಬದುಕಿದರೆ ನಾವು ಕರ್ತನಿಗಾಗಿ ಬದುಕುತ್ತೇವೆ, ಸತ್ತರೆ ಕರ್ತನಿಗಾಗಿ ಸಾಯುತ್ತೇವೆ. ಹೀಗೆ ನಾವು ಬದುಕಿದರೂ ಸತ್ತರೂ ಕರ್ತನಿಗೆ ಸೇರಿದವರಾಗಿರುತ್ತೇವೆ.</verse>
				<verse number="9">ಈ ಕಾರಣಕ್ಕಾಗಿಯೇ, ಜೀವಿಸುವವರಿಗೂ ಸತ್ತವರಿಗೂ ಕರ್ತನಾಗಿರಬೇಕೆಂದು ಕ್ರಿಸ್ತನು ಮರಣಹೊಂದಿ ಪುನರುತ್ಥಾನಗೊಂಡರು.</verse>
				<verse number="10">ಹೀಗಿರುವಾಗ, ನೀನು ಏಕೆ ನಿನ್ನ ಸಹೋದರರಿಗೆ ತೀರ್ಪುಮಾಡುತ್ತೀ? ಅಥವಾ ನಿನ್ನ ಸಹೋದರರನ್ನು ಏಕೆ ಹೀನಾಯವಾಗಿ ಕಾಣುತ್ತೀ? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲುವೆವು.</verse>
				<verse number="11">ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ನಾನು ಜೀವಿಸುವುದರಿಂದ, ಪ್ರತಿಯೊಬ್ಬರೂ ನನ್ನ ಮುಂದೆ ಮೊಣಕಾಲೂರುವರು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಅರಿಕೆ ಮಾಡುವುದು,’ ಎಂದು ಕರ್ತನು ಹೇಳುತ್ತಾರೆ.”</verse>
				<verse number="12">ಹೀಗಿರುವಾಗ ನಮ್ಮಲ್ಲಿ ಪ್ರತಿಯೊಬ್ಬರೂ ತಮ್ಮ ಬಗ್ಗೆ ದೇವರಿಗೆ ಲೆಕ್ಕ ಒಪ್ಪಿಸಬೇಕು.</verse>
				<verse number="13">ಆದ್ದರಿಂದ ನಾವು ಒಬ್ಬರ ಮೇಲೊಬ್ಬರು ತೀರ್ಪುಮಾಡದಿರೋಣ. ಇದಲ್ಲದೆ ಸಹೋದರರಿಗೆ ಅಡೆತಡೆಯನ್ನಾಗಲಿ, ಅಡ್ಡಿಯನ್ನಾಗಲಿ, ಹಾಕದಿರೋಣ.</verse>
				<verse number="14">ಯಾವುದೇ ಪದಾರ್ಥವು ತನ್ನಷ್ಟಕ್ಕೆ ಅಶುದ್ಧವಲ್ಲ ಎಂದು ನಾನು ಕರ್ತ ಆಗಿರುವ ಯೇಸುವಿನಲ್ಲಿ ನಿಶ್ಚಯವಾಗಿ ಬಲ್ಲೆನು. ಆದರೆ ಯಾರಾದರೂ ಅಶುದ್ಧವೆಂದು ಪರಿಗಣಿಸಿದರೆ ಅದು ಅವರಿಗೆ ಅಶುದ್ಧವಾಗಿರುವುದು.</verse>
				<verse number="15">ನೀವು ಆಹಾರದಿಂದ ನಿಮ್ಮ ಸಹೋದರರನ್ನು ದುಃಖ ಪಡಿಸುವುದಾದರೆ ನೀವು ಪ್ರೀತಿಯಿಂದ ನಡೆದುಕೊಳ್ಳುವುದಿಲ್ಲ. ನೀವು ತಿನ್ನುವುದರ ಮೂಲಕ ಕ್ರಿಸ್ತನು ಯಾವನಿಗೋಸ್ಕರವಾಗಿ ಸತ್ತರೋ ಅಂಥವರನ್ನು ನಾಶಮಾಡಬೇಡಿರಿ.</verse>
				<verse number="16">ನಿಮಗಿರುವ ಒಳ್ಳೆಯದು ಪರರ ದೂಷಣೆಗೆ ಗುರಿಯಾಗದಿರಲಿ.</verse>
				<verse number="17">ಏಕೆಂದರೆ ತಿನ್ನುವುದೂ ಕುಡಿಯುವುದೂ ದೇವರ ರಾಜ್ಯವಲ್ಲ. ನೀತಿ, ಸಮಾಧಾನ, ಪವಿತ್ರಾತ್ಮರಲ್ಲಿರುವ ಆನಂದವೂ ಆಗಿದೆ.</verse>
				<verse number="18">ಈ ರೀತಿಯಲ್ಲಿ ಕ್ರಿಸ್ತನಿಗೆ ಸೇವೆಮಾಡುವವರು ದೇವರಿಗೆ ಮೆಚ್ಚುಗೆಯಾದವರೂ ಜನರಿಂದ ಅನುಮೋದನೆ ಹೊಂದಿದವರೂ ಆಗಿರುತ್ತಾರೆ.</verse>
				<verse number="19">ಆದ್ದರಿಂದ ಯಾವುದು ನಮ್ಮನ್ನು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ನಡೆಸುತ್ತದೋ ಅದನ್ನೇ ಮಾಡೋಣ.</verse>
				<verse number="20">ಆಹಾರದ ನಿಮಿತ್ತವಾಗಿ ದೇವರ ಕೆಲಸವನ್ನು ಕೆಡಿಸಬೇಡ, ಎಲ್ಲಾ ಆಹಾರವೂ ಶುದ್ಧವಾದದ್ದೇ. ಆದರೆ ಒಬ್ಬರು ತಿಂದು ವಿಘ್ನವನ್ನು ಒಡ್ಡುವುದು ಕೆಟ್ಟದ್ದು.</verse>
				<verse number="21">ಮಾಂಸ ತಿನ್ನುವುದಾಗಲಿ, ದ್ರಾಕ್ಷಾರಸವನ್ನು ಕುಡಿಯುವುದಾಗಲಿ ಅಥವಾ ಬೇರೆ ಏನನ್ನೇ ಆಗಲಿ, ಅದು ನಿಮ್ಮ ಸಹೋದರರನ್ನು ಎಡವುವಂತೆ ಮಾಡುವುದಾದರೆ ಅದನ್ನು ಮಾಡದೆ ಇರುವುದೇ ಒಳ್ಳೆಯದು.</verse>
				<verse number="22">ಈ ವಿಷಯದಲ್ಲಿ ನಿಮಗಿರುವ ವೈಯಕ್ತಿಕ ದೃಢವಿಶ್ವಾಸವನ್ನು ನೀವು ದೇವರ ಮುಂದೆ ಇಟ್ಟುಕೊಂಡಿರು. ತಾವು ಅನುಮೋದಿಸಿ ಮಾಡಿದ ಕಾರ್ಯಗಳ ಬಗ್ಗೆ ತಮಗೆ ದಂಡನಾತೀರ್ಪು ಮಾಡಿಕೊಳ್ಳದವರು ಧನ್ಯರು.</verse>
				<verse number="23">ಆದರೆ ಅನುಮಾನವುಳ್ಳವರು ಊಟಮಾಡುವುದು ವಿಶ್ವಾಸದಿಂದ ಅಲ್ಲವಾದ್ದರಿಂದ ಅವರು ದೋಷಿಯಾಗುತ್ತಾರೆ. ವಿಶ್ವಾಸವಿಲ್ಲದೆ ಮಾಡುವ ಎಲ್ಲವೂ ಪಾಪವಾಗಿವೆ.</verse>
			</chapter>
			<chapter number="15">
				<verse number="1">ವಿಶ್ವಾಸದಲ್ಲಿ ಬಲವುಳ್ಳವರಾದ ನಾವು ನಮ್ಮ ಸುಖವನ್ನು ನೋಡಿಕೊಳ್ಳದೆ, ಬಲಹೀನರ ಬಲಹೀನತೆಗಳನ್ನು ಸಹಿಸಿಕೊಳ್ಳಬೇಕು.</verse>
				<verse number="2">ನಮ್ಮಲ್ಲಿ ಪ್ರತಿಯೊಬ್ಬರು ತಮ್ಮ ನೆರೆಯವರ ಭಕ್ತಿವೃದ್ಧಿಯ ಹಿತಕ್ಕಾಗಿ ಅವರನ್ನು ಸುಖವನ್ನು ನೋಡಿಕೊಳ್ಳಲಿ.</verse>
				<verse number="3">“ನಿಮ್ಮನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಂದವು,” ಎಂದು ಬರೆದಿರುವಂತೆ ಕ್ರಿಸ್ತನು ಸಹ ತಮ್ಮ ಸುಖಕ್ಕಾಗಿ ಬಾಳಲಿಲ್ಲ.</verse>
				<verse number="4">ಪವಿತ್ರ ವೇದದಲ್ಲಿ ಮುಂಚಿತವಾಗಿ ಬರೆದಿರುವುದೆಲ್ಲವೂ ನಮ್ಮ ಬೋಧನೆಗಾಗಿಯೇ ಬರೆಯಲಾಗಿದೆ. ನಾವು ಆ ಬೋಧನೆಗಳ ಮೂಲಕ ಸಹನೆಯನ್ನೂ ಉತ್ತೇಜನೆಯನ್ನೂ ಹೊಂದಿಕೊಂಡು ನಿರೀಕ್ಷೆಯುಳ್ಳವರಾಗಿರಬೇಕೆಂದು ಬರೆಯಲಾಗಿದೆ.</verse>
				<verse number="5">ಸಹನೆಯನ್ನೂ ಉತ್ತೇಜನವನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಹಿಂಬಾಲಿಸುವಂತೆ ನಿಮಗೆ ಒಂದೇ ಆತ್ಮವನ್ನು ಕೊಡಲಿ.</verse>
				<verse number="6">ಹೀಗೆ ನೀವು ಒಂದೇ ಮನಸ್ಸುಳ್ಳವರಾಗಿ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯಾದ ದೇವರನ್ನು ಒಂದೇ ಬಾಯಿಂದ ಮಹಿಮೆ ಪಡಿಸುವಿರಿ.</verse>
				<verse number="7">ದೇವರಿಗೆ ಮಹಿಮೆಯಾಗುವುದಕ್ಕಾಗಿ ಕ್ರಿಸ್ತನು ನಿಮ್ಮನ್ನು ಸ್ವೀಕರಿಸಿದಂತೆಯೇ ನೀವು ಒಬ್ಬರನ್ನೊಬ್ಬರು ಸ್ವೀಕರಿಸಿರಿ.</verse>
				<verse number="8">ನಾನು ನಿಮಗೆ ಹೇಳುವುದೇನೆಂದರೆ, ದೇವರು ನಂಬಿಗಸ್ತರು ಎಂದು ತೋರಿಸುವುದಕ್ಕಾಗಿ ಕ್ರಿಸ್ತ ಯೇಸು ಯೆಹೂದ್ಯರಿಗೆ ಸೇವಕರಾಗಿ ಬಂದರು. ಹೀಗೆ ದೇವರು ಪಿತೃಗಳಿಗೆ ಕೊಟ್ಟ ವಾಗ್ದಾನಗಳನ್ನು ದೃಢಪಡಿಸಿದರು.</verse>
				<verse number="9">ಇದಲ್ಲದೆ ಯೆಹೂದ್ಯರಲ್ಲದವರು ದೇವರ ಕರುಣೆಗಾಗಿ ದೇವರನ್ನು ಮಹಿಮೆ ಪಡಿಸುವಂತೆ ಹೀಗೆ ಮಾಡಿದರು. ಇದು ಪವಿತ್ರ ವೇದದಲ್ಲಿ ಹೀಗೆ ಬರೆದದ್ದನ್ನು ನೆರವೇರಿಸಿತು: “ಆದ್ದರಿಂದ ಯೆಹೂದ್ಯರಲ್ಲದವರ ನಡುವೆ ನಾನು ನಿನ್ನನ್ನು ಸ್ತುತಿಸುವೆನು, ನಾನು ನಿನ್ನ ನಾಮವನ್ನು ಸ್ತುತಿಸಿ ಹಾಡುವೆನು.”</verse>
				<verse number="10">ಮತ್ತೊಂದು ಕಡೆಯಲ್ಲಿ ಹೀಗೆ ಬರೆಯಲಾಗಿದೆ: “ಯೆಹೂದ್ಯರಲ್ಲದವರೇ ದೇವಜನರೊಂದಿಗೆ ಸೇರಿ ಸಂತೋಷಪಡಿರಿ.”</verse>
				<verse number="11">ಇನ್ನೊಂದು ಕಡೆಯಲ್ಲಿ, “ಯೆಹೂದ್ಯರಲ್ಲದವರೇ ಕರ್ತನನ್ನು ಸ್ತುತಿಸಿರಿ. ಸಮಸ್ತ ಜನರೇ ಕರ್ತನಿಗೆ ಸ್ತೋತ್ರಮಾಡಿರಿ.”</verse>
				<verse number="12">ಪುನಃ ಪ್ರವಾದಿ ಯೆಶಾಯನು ಹೇಳುವುದೇನೆಂದರೆ: “ಇಷಯನ ವಂಶದಿಂದ ಬೇರು ಒಂದು ಚಿಗುರುವುದು, ಜನಾಂಗಗಳನ್ನು ಆಳುವವರಾಗಿ ಅವರು ಉದಯಿಸುವರು. ಯೆಹೂದ್ಯರಲ್ಲದವರು ಆತನಲ್ಲಿ ನಿರೀಕ್ಷೆ ಇಡುವರು.”</verse>
				<verse number="13">ನಿರೀಕ್ಷೆಯ ದೇವರು, ನೀವು ಪವಿತ್ರಾತ್ಮನ ಶಕ್ತಿಯಿಂದ ನಿಮ್ಮ ನಿರೀಕ್ಷೆಯನ್ನು ಹೆಚ್ಚಿಸಿ, ನೀವು ನಿಮ್ಮ ವಿಶ್ವಾಸದಿಂದ ಸಕಲ ಸಂತೋಷದಿಂದಲೂ ಸಮಾಧಾನದಿಂದಲೂ ಪ್ರವಾಹಿಸುವಂತೆ ಮಾಡಲಿ.</verse>
				<verse number="14">ನನ್ನ ಪ್ರಿಯರೇ, ನೀವು ಒಳ್ಳೆಯತನದಿಂದ ಪೂರ್ಣವಾದವರೂ ಸಕಲ ತಿಳುವಳಿಕೆಯಿಂದ ತುಂಬಿದವರೂ ಆಗಿದ್ದು, ಒಬ್ಬರಿಗೊಬ್ಬರು ಬುದ್ಧಿ ಹೇಳುವುದಕ್ಕೆ ಶಕ್ತರಾಗಿದ್ದೀರೆಂದು ನಿಮ್ಮ ಬಗ್ಗೆ ನನಗೆ ಭರವಸೆ ಇದೆ.</verse>
				<verse number="15">ನಾನು ನಿಮಗೆ ಕೆಲವು ವಿಷಯಗಳನ್ನು ಜ್ಞಾಪಕ ಪಡಿಸುವುದಕ್ಕಾಗಿ ಬಹಳ ಧೈರ್ಯದಿಂದ ಹೀಗೆ ಬರೆದಿದ್ದೇನೆ.</verse>
				<verse number="16">ಯೆಹೂದ್ಯರಲ್ಲದವರು ಪವಿತ್ರಾತ್ಮನಿಂದ ಪರಿಶುದ್ಧರಾಗಿ, ದೇವರಿಗೆ ಅಂಗೀಕೃತವಾದ ಕಾಣಿಕೆಗಳಾಗಬೇಕೆಂಬ ಕಾರಣದಿಂದ, ನಾನು ಯೆಹೂದ್ಯರಲ್ಲದವರಿಗೆ ಕ್ರಿಸ್ತ ಯೇಸುವಿನ ಸೇವಕನಾಗಿ ದೇವರ ಸುವಾರ್ತೆಯನ್ನು ಪ್ರಕಟಿಸಲು ದೇವರು ನನಗೆ ಕೃಪೆ ನೀಡಿದ್ದಾರೆ.</verse>
				<verse number="17">ಆದ್ದರಿಂದ ಕ್ರಿಸ್ತ ಯೇಸುವಿನಲ್ಲಿ ದೇವರ ಸೇವೆಯ ವಿಷಯವಾಗಿ ಹೊಗಳಿಕೊಳ್ಳುತ್ತೇನೆ.</verse>
				<verse number="18">ಯೆಹೂದ್ಯರಲ್ಲದವರನ್ನು ದೇವರಿಗೆ ವಿಧೇಯರಾಗುವುದಕ್ಕಾಗಿ ಕ್ರಿಸ್ತನು ನನ್ನ ಮೂಲಕ ಮಾತಿನಿಂದಲೂ ಕೃತ್ಯದಿಂದಲೂ</verse>
				<verse number="19">ಬಲವಾದ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಪವಿತ್ರಾತ್ಮ ಶಕ್ತಿಯಿಂದಲೂ ಮಾಡಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು. ಯೆರೂಸಲೇಮಿನಿಂದ ಪ್ರಾರಂಭಿಸಿ, ಇಲ್ಲುರಿಕದವರೆಗೆ ನಾನು ಕ್ರಿಸ್ತನ ಸುವಾರ್ತೆಯನ್ನು ಸಂಪೂರ್ಣವಾಗಿ ಸಾರಿದ್ದೇನೆ.</verse>
				<verse number="20">ಬೇರೊಬ್ಬರು ಹಾಕಿರುವ ಅಸ್ತಿವಾರದ ಮೇಲೆ ನಾನು ಕಟ್ಟಬಾರದೆಂದು, ಕ್ರಿಸ್ತನ ಹೆಸರು ತಿಳಿಯಪಡಿಸದೆ ಇರುವಲ್ಲಿ ಸುವಾರ್ತೆಯನ್ನು ಸಾರಬೇಕೆಂದು ಆತುರದಿಂದ ಹೋರಾಡುತ್ತಿದ್ದೇನೆ.</verse>
				<verse number="21">ಪವಿತ್ರ ವೇದದಲ್ಲಿ ಬರೆದಿರುವಂತೆ: “ಯಾರಿಗೆ ಆತನ ಸುದ್ದಿ ಮುಟ್ಟಲಿಲ್ಲವೋ ಅವರು ಆತನನ್ನು ಕಾಣುವರು; ಯಾರು ಆತನ ವರ್ತಮಾನ ಕೇಳಲಿಲ್ಲವೋ ಅವರು ಗ್ರಹಿಸಿಕೊಳ್ಳುವರು.”</verse>
				<verse number="22">ಈ ಕಾರಣದಿಂದಲೇ ನಾನು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಬಾರಿ ಅಭ್ಯಂತರವಾಯಿತು.</verse>
				<verse number="23">ಈಗಲಾದರೋ ಈ ಪ್ರದೇಶದಲ್ಲಿ ನನಗೆ ಅವಕಾಶವಿಲ್ಲದಿರುವುದರಿಂದಲೂ ಅನೇಕ ವರ್ಷಗಳಿಂದ ನಿಮ್ಮನ್ನು ಸಂದರ್ಶಿಸಬೇಕೆಂಬ ಹಂಬಲವಿರುವುದರಿಂದಲೂ</verse>
				<verse number="24">ನಾನು ಸ್ಪೇನ್ ದೇಶಕ್ಕೆ ಹೋಗುವಾಗ ನಿಮ್ಮನ್ನು ಸಂದರ್ಶಿಸುವ ನಿರೀಕ್ಷೆಯಲ್ಲಿದ್ದೇನೆ. ಸ್ವಲ್ಪಕಾಲ ನಿಮ್ಮ ಅನ್ಯೋನ್ಯತೆಯ ಆನಂದವನ್ನು ಪಡೆದ ಬಳಿಕ ಅಲ್ಲಿಗೆ ಹೋಗುವ ನನ್ನ ಪ್ರಯಾಣದಲ್ಲಿ ನಿಮ್ಮ ಸಹಕಾರವನ್ನು ಬಯಸುತ್ತೇನೆ.</verse>
				<verse number="25">ಈಗಲಾದರೋ ನಾನು ದೇವಜನರ ಸೇವೆಗಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ.</verse>
				<verse number="26">ಮಕೆದೋನ್ಯ ಮತ್ತು ಅಖಾಯದವರು ಯೆರೂಸಲೇಮಿನ ಭಕ್ತರಲ್ಲಿರುವ ಬಡವರಾಗಿರುವವರಿಗೆ ಸಹಾಯ ಮಾಡುವುದು ಒಳ್ಳೆಯದೆಂದು ಭಾವಿಸಿದ್ದಾರೆ.</verse>
				<verse number="27">ಅವರು ಅದನ್ನು ಮಾಡಲು ಇಷ್ಟಪಟ್ಟದ್ದಲ್ಲದೆ, ಅದು ಕರ್ತವ್ಯವೂ ಆಗಿದೆ. ಹೌದು, ಯೆಹೂದ್ಯರಲ್ಲದವರು ಯೆಹೂದ್ಯರ ಆತ್ಮಿಕ ಆಶೀರ್ವಾದಗಳಲ್ಲಿ ಪಾಲುಗೊಂಡಿರುವುದಾದರೆ ತಮ್ಮ ಲೌಕಿಕ ವಿಷಯಗಳಲ್ಲಿ ಅವರೊಂದಿಗೆ ಹಂಚಿಕೊಳ್ಳುವುದು ಅವರ ಕರ್ತವ್ಯವಾಗಿದೆ.</verse>
				<verse number="28">ಆದ್ದರಿಂದ ಈ ಕೆಲಸವನ್ನು ಪೂರೈಸಿ ಸಂಗ್ರಹಿಸಿ ಕೊಟ್ಟದ್ದನ್ನು ಅವರಿಗೆ ಒಪ್ಪಿಸಿ ಖಚಿತವಾದ ಬಳಿಕ, ನಾನು ಸ್ಪೇನ್ ದೇಶಕ್ಕೆ ಹೋಗುವ ದಾರಿಯಲ್ಲಿ ನಿಮ್ಮನ್ನು ಸಂದರ್ಶಿಸುತ್ತೇನೆ.</verse>
				<verse number="29">ನಾನು ನಿಮ್ಮ ಬಳಿಗೆ ಬರುವಾಗ ಕ್ರಿಸ್ತನ ಆಶೀರ್ವಾದದಿಂದ ತುಂಬಿದವನಾಗಿ ಬರುತ್ತೇನೆಂದು ಬಲ್ಲೆನು.</verse>
				<verse number="30">ಪ್ರಿಯರೇ, ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿಯೂ ಪವಿತ್ರಾತ್ಮರ ಪ್ರೀತಿಯ ಮೂಲಕವಾಗಿಯೂ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನನಗೋಸ್ಕರ ದೇವರಲ್ಲಿ ಪ್ರಾರ್ಥಿಸಿ, ನನ್ನೊಂದಿಗೆ ಹೋರಾಡಿರಿ.</verse>
				<verse number="31">ನಾನು ಯೂದಾಯ ಪ್ರಾಂತದಲ್ಲಿ ಅವಿಶ್ವಾಸಿಗಳ ಕೈಯಿಂದ ಕಾಪಾಡಬೇಕೆಂತಲೂ ನನ್ನ ಸೇವೆಯು ಯೆರೂಸಲೇಮಿನಲ್ಲಿರುವ ದೇವಜನರಿಗೆ ಮೆಚ್ಚುಗೆಯಾಗಿರಬೇಕೆಂತಲೂ ಪ್ರಾರ್ಥಿಸಿರಿ.</verse>
				<verse number="32">ಆಗ ನಾನು ದೇವರ ಚಿತ್ತಾನುಸಾರ ನಿಮ್ಮ ಬಳಿಗೆ ಸಂತೋಷದಿಂದ ಬಂದು, ನಿಮ್ಮ ಸಂಗಡ ವಿಶ್ರಾಂತಿ ಹೊಂದುವೆನು.</verse>
				<verse number="33">ಸಮಾಧಾನದ ದೇವರು ನಿಮ್ಮೆಲ್ಲರೊಂದಿಗಿರಲಿ. ಆಮೆನ್.</verse>
			</chapter>
			<chapter number="16">
				<verse number="1">ನಮ್ಮ ಸಹೋದರಿಯೂ ಕೆಂಖ್ರೆಯ ಸಭೆಯ ಸೇವಕಿಯೂ ಆಗಿರುವ ಫೊಯಿಬೆಯನ್ನು ನಿಮಗೆ ಪರಿಚಯಿಸುತ್ತೇನೆ.</verse>
				<verse number="2">ಕರ್ತನಲ್ಲಿ ದೇವಜನರಿಗೆ ಯೋಗ್ಯವಾಗಿರುವ ರೀತಿಯಲ್ಲಿ ಆಕೆಯನ್ನು ಸ್ವೀಕರಿಸಿ, ಆಕೆಯು ಅನೇಕರಿಗೂ ನನಗೂ ವಿಶೇಷವಾದ ರೀತಿಯಲ್ಲಿ ಸಹಾಯ ಮಾಡಿದವಳಾಗಿರುವುದರಿಂದ ನಿಮಗೆ ಯಾವ ಕೊರತೆಗಳಿದ್ದರೂ ಆಕೆಗೆ ಬೇಕಾದದ್ದನ್ನು ಒದಗಿಸಿರಿ.</verse>
				<verse number="3">ಕ್ರಿಸ್ತ ಯೇಸುವಿನಲ್ಲಿ ನನ್ನ ಜೊತೆ ಕೆಲಸದವರಾಗಿರುವ ಪ್ರಿಸ್ಕಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.</verse>
				<verse number="4">ಅವರು ನನ್ನ ಪ್ರಾಣದ ನಿಮಿತ್ತವಾಗಿ ತಮ್ಮ ಪ್ರಾಣಗಳನ್ನು ಅಪಾಯಕ್ಕೆ ಒಡ್ಡಿದರು. ಅವರಿಗೆ ನಾನು ಮಾತ್ರವೇ ಅಲ್ಲ ಯೆಹೂದ್ಯರಲ್ಲದವರು ಎಲ್ಲಾ ಸಭೆಗಳವರೂ ಕೃತಜ್ಞರಾಗಿರುತ್ತಾರೆ.</verse>
				<verse number="5">ಅವರ ಮನೆಯಲ್ಲಿ ಸೇರಿ ಬರುವ ಸಭೆಗೂ ನನ್ನ ವಂದನೆಗಳನ್ನು ತಿಳಿಸಿರಿ. ಏಷ್ಯಾ ಪ್ರಾಂತದಲ್ಲಿ ಕ್ರಿಸ್ತನಿಗೆ ಪ್ರಥಮ ಫಲವಾಗಿರುವ ನನ್ನ ಪ್ರಿಯನಾಗಿರುವ ಎಪೈನೆತನಿಗೂ ನನ್ನ ವಂದನೆಗಳನ್ನು ತಿಳಿಸಿರಿ.</verse>
				<verse number="6">ನಿಮಗೋಸ್ಕರ ಬಹು ಶ್ರಮೆಪಟ್ಟ ಮರಿಯಳಿಗೆ ವಂದನೆಗಳು.</verse>
				<verse number="7">ನನ್ನ ಬಂಧುಗಳೂ ಜೊತೆ ಸೆರೆಯವರೂ ಆದ ಅಂದ್ರೋನಿಕನಿಗೂ ಯೂನ್ಯಳಿಗೂ ವಂದನೆಗಳು. ಅವರು ಅಪೊಸ್ತಲರಲ್ಲಿ ಪ್ರಸಿದ್ಧರೂ ಮತ್ತು ನನಗಿಂತ ಮೊದಲೇ ಕ್ರಿಸ್ತನಲ್ಲಿದ್ದವರೂ ಆಗಿರುತ್ತಾರೆ.</verse>
				<verse number="8">ನನಗೆ ಕರ್ತನಲ್ಲಿ ಪ್ರಿಯನಾದ ಅಂಪ್ಲಿಯಾತನಿಗೆ ವಂದನೆಗಳು.</verse>
				<verse number="9">ಕ್ರಿಸ್ತನಲ್ಲಿ ನನ್ನ ಜೊತೆ ಸೇವಕನಾಗಿರುವ ಉರ್ಬಾನನಿಗೂ ನನಗೆ ಪ್ರಿಯನಾದ ಸ್ತಾಖುನಿಗೂ ವಂದನೆಗಳು.</verse>
				<verse number="10">ಕ್ರಿಸ್ತನಲ್ಲಿ ಪರಿಶೋಧಿತನಾದ ಅಪೆಲ್ಲನಿಗೆ ವಂದನೆಗಳು, ಅರಿಸ್ತೊಬೂಲನ ಮನೆಯವರಿಗೆ ವಂದನೆಗಳು.</verse>
				<verse number="11">ನನ್ನ ಸಂಬಂಧಿಯಾಗಿರುವ ಹೆರೊಡಿಯೋನನಿಗೆ ವಂದನೆಗಳು, ಕರ್ತನಲ್ಲಿರುವ ನಾರ್ಕಿಸ್ಸನ ಕುಟುಂಬದವರಿಗೆ ವಂದನೆಗಳು.</verse>
				<verse number="12">ಕರ್ತನ ಸೇವೆಯಲ್ಲಿ ದುಡಿಯುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು, ಕರ್ತನಲ್ಲಿ ತುಂಬಾ ಶ್ರಮಪಟ್ಟು ದುಡಿದಿರುವ ಪ್ರೀತಿಯ ಪೆರ್ಸೀಸಳಿಗೂ ನನ್ನ ವಂದನೆಗಳು.</verse>
				<verse number="13">ಕರ್ತನಲ್ಲಿ ಆಯ್ಕೆಯಾಗಿರುವ ರೂಫನಿಗೂ ನನಗೂ ತಾಯಿಯಂತಿದ್ದ ಅವನ ತಾಯಿಗೂ ವಂದನೆಗಳು.</verse>
				<verse number="14">ಅಸುಂಕ್ರಿತ, ಪ್ಲೆಗೋನ, ಹೆರ್ಮೆಯನಿಗೂ ಪತ್ರೋಬನಿಗೂ ಹೆರ್ಮಾನ ಮತ್ತು ಅವನೊಂದಿಗಿರುವ ಪ್ರಿಯರಿಗೂ ವಂದನೆಗಳು.</verse>
				<verse number="15">ಫಿಲೊಲೊಗ, ಯೂಲ್ಯಳು, ನೇರ್ಯ ಮತ್ತು ಅವನ ಸಹೋದರಿ, ಒಲುಂಪ ಮತ್ತು ಅವರೊಂದಿಗಿರುವ ಎಲ್ಲಾ ಭಕ್ತರಿಗೂ ವಂದನೆಗಳು.</verse>
				<verse number="16">ಪವಿತ್ರವಾದ ಮುದ್ದನ್ನಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಎಲ್ಲಾ ಸಭೆಗಳವರೂ ನಿಮಗೆ ವಂದನೆಗಳನ್ನು ಕಳುಹಿಸುತ್ತಾರೆ.</verse>
				<verse number="17">ಪ್ರಿಯರೇ, ನೀವು ಕಲಿತುಕೊಂಡ ಬೋಧನೆಗೆ ವಿರೋಧವಾಗಿರುವ ಭೇದಗಳನ್ನೂ ಅಭ್ಯಂತರಗಳನ್ನೂ ಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರಿಂದ ದೂರವಾಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.</verse>
				<verse number="18">ಅಂಥಾ ಜನರು ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಸೇವೆ ಮಾಡುವವರಾಗಿರದೆ ತಮ್ಮ ಹೊಟ್ಟೆಯ ಸೇವೆ ಮಾಡುವವರಾಗಿರುತ್ತಾರೆ. ನಯವಾದ ಮತ್ತು ಮುಖಸ್ತುತಿಯ ಮಾತುಗಳಿಂದ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.</verse>
				<verse number="19">ನಿಮ್ಮ ವಿಧೇಯತೆಯು ಎಲ್ಲಾ ಮನುಷ್ಯರಿಗೂ ಪ್ರಸಿದ್ಧವಾಯಿತು. ಆದ್ದರಿಂದ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ಆದರೆ ನೀವು ಒಳ್ಳೆಯದನ್ನು ಕುರಿತು ಜ್ಞಾನಿಗಳಾಗಿಯೂ ಕೆಟ್ಟವುಗಳನ್ನು ಕುರಿತು ನಿಷ್ಕಳಂಕರಾಗಿಯೂ ಇರಬೇಕೆಂದು ಅಪೇಕ್ಷಿಸುತ್ತೇನೆ.</verse>
				<verse number="20">ಆಗ ಸಮಾಧಾನದ ದೇವರು ಬೇಗನೆ ಸೈತಾನನನ್ನು ನಿಮ್ಮ ಕಾಲುಗಳ ಕೆಳಗೆ ಹಾಕಿ ಜಜ್ಜಿಬಿಡುವನು. ನಮ್ಮ ಕರ್ತ ಆಗಿರುವ ಯೇಸುವಿನ ಕೃಪೆಯು ನಿಮ್ಮೊಂದಿಗಿರಲಿ.</verse>
				<verse number="21">ನನ್ನ ಜೊತೆ ಕೆಲಸದವನಾಗಿರುವ ತಿಮೊಥೆಯನು ನಿಮಗೆ ವಂದನೆಗಳನ್ನು ತಿಳಿಸುತ್ತಾನೆ. ಹಾಗೆಯೇ ನನ್ನ ಬಂಧುಗಳಾದ ಲೂಕ್ಯನೂ ಯಾಸೋನನೂ ಸೋಸಿಪತ್ರನೂ ನಿಮಗೆ ವಂದನೆಗಳನ್ನು ತಿಳಿಸುತ್ತಾರೆ.</verse>
				<verse number="22">ಈ ಪತ್ರವನ್ನು ಬರೆದ ತೆರ್ತ್ಯನೆಂಬ ನಾನು ಕರ್ತನಲ್ಲಿ ನಿಮ್ಮನ್ನು ವಂದಿಸುತ್ತೇನೆ.</verse>
				<verse number="23">ಇಲ್ಲಿ ನನಗೂ ಇಡೀ ಸಭೆಗೂ ಅತಿಥಿ ಸತ್ಕಾರ ಮಾಡುತ್ತಿರುವ ಗಾಯನು ತನ್ನ ವಂದನೆಗಳನ್ನು ತಿಳಿಸುತ್ತಾನೆ. ಈ ಪಟ್ಟಣದ ಖಜಾಂಚಿಯಾಗಿರುವ ಎರಸ್ತನೂ ಮತ್ತು ಸಹೋದರ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.</verse>
				<verse number="24">ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮೆಲ್ಲರೊಡನೆ ಇರಲಿ! ಆಮೆನ್.</verse>
				<verse number="25">ನನ್ನ ಸುವಾರ್ತೆಯು ಹೇಳುವಂತೆಯೇ ನಿಮ್ಮನ್ನು ಬಲಪಡಿಸುವ ದೇವರಿಗೆ ಈಗ ಎಲ್ಲಾ ಮಹಿಮೆಯಾಗಲಿ. ಕ್ರಿಸ್ತ ಯೇಸುವಿನ ಕುರಿತಾಗಿರುವ ಈ ಸಂದೇಶವು ಆದಿಯಿಂದಲೂ ಗುಪ್ತವಾಗಿರುವ ರಹಸ್ಯದ ದೇವರ ಯೋಜನೆಯು ಯೆಹೂದ್ಯರಲ್ಲದವರಾದ ನಿಮಗಾಗಿ ಈಗ ಪ್ರಕಟವಾಗಿದೆ.</verse>
				<verse number="26">ಆದರೆ ನಿತ್ಯ ದೇವರು ಆಜ್ಞಾಪಿಸಿದಂತೆ ಈಗ ಪ್ರವಾದಿಗಳ ಗ್ರಂಥಗಳ ಮೂಲಕ ಮುಂತಿಳಿಸಿರುವಂತೆ, ಈ ಸಂದೇಶವು ಯೆಹೂದ್ಯರಲ್ಲದ ಜನರೆಲ್ಲರಿಗೂ ತಿಳಿಸಲಾಗಿದೆ. ಹೀಗೆ ಅವರು ನಂಬಿದ್ದರಿಂದ ವಿಧೇಯರಾಗುತ್ತಾರೆ.</verse>
				<verse number="27">ಶಕ್ತರಾಗಿರುವ ಒಬ್ಬರೇ ಜ್ಞಾನವಂತರಾಗಿರುವ ದೇವರಿಗೆ ಕ್ರಿಸ್ತ ಯೇಸುವಿನ ಮೂಲಕ ಎಂದೆಂದಿಗೂ ಮಹಿಮೆಯಾಗಲಿ! ಆಮೆನ್.</verse>
			</chapter>
		</book>
		<book number="46">
			<chapter number="1">
				<verse number="1">ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನಿಂದ ಅಪೊಸ್ತಲನಾಗಲು ಕರೆಯಲಾದ ಪೌಲನೆಂಬ ನಾನು ಮತ್ತು ನಮ್ಮ ಸಹೋದರ ಸೊಸ್ಥೆನನು,</verse>
				<verse number="2">ಕ್ರಿಸ್ತ ಯೇಸುವಿನಲ್ಲಿ ಪ್ರತ್ಯೇಕವಾಗಿ, ಪವಿತ್ರರಾಗುವುದಕ್ಕೆ ಕರೆಹೊಂದಿದ ಕೊರಿಂಥದಲ್ಲಿರುವ ದೇವರ ಸಭೆಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟ ಸಕಲ ಜನರಿಗೂ ಬರೆಯುವ ಪತ್ರ:</verse>
				<verse number="3">ನಮ್ಮ ತಂದೆಯಾದ ದೇವರಿಂದಲೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.</verse>
				<verse number="4">ಕ್ರಿಸ್ತ ಯೇಸುವಿನಲ್ಲಿ ನಿಮಗೆ ಕೊಟ್ಟಿರುವ ದೇವರ ಕೃಪೆಯ ಕಾರಣಕ್ಕಾಗಿ ನಾನು ಯಾವಾಗಲೂ ನಿಮಗೋಸ್ಕರ ಅವರಿಗೆ ಕೃತಜ್ಞತೆ ಹೇಳುವವನಾಗಿದ್ದೇನೆ.</verse>
				<verse number="5">ನೀವು ಕ್ರಿಸ್ತ ಯೇಸುವಿನಲ್ಲಿ ಜ್ಞಾನದಲ್ಲಿಯೂ ಮಾತುಗಳಲ್ಲಿಯೂ ಎಲ್ಲಾ ಸಮೃದ್ಧಿಯನ್ನು ಹೊಂದಿದ್ದೀರಿ.</verse>
				<verse number="6">ಆದ್ದರಿಂದ ದೇವರು ಕ್ರಿಸ್ತ ಯೇಸುವಿನ ವಿಷಯವಾದ ನಮ್ಮ ಸಾಕ್ಷಿಯು ನಿಮ್ಮಲ್ಲಿ ದೃಢವಾಯಿತು.</verse>
				<verse number="7">ಹೀಗಿರುವುದರಿಂದ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನ ಪುನರಾಗಮನವನ್ನು ಆತುರದಿಂದ ಎದುರು ನೋಡುವವರಾದ ನಿಮಗೆ, ಯಾವುದೇ ಆತ್ಮಿಕ ವರಗಳ ಕೊರತೆಯು ಇರುವುದಿಲ್ಲ.</verse>
				<verse number="8">ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ದಿನದಲ್ಲಿ ನೀವು ನಿರ್ದೋಷಿಗಳಾಗಿರುವಂತೆ ಅವರು ಕೊನೆಯತನಕವೂ ನಿಮ್ಮನ್ನು ಬಲಪಡಿಸಿ ಕಾಯುವರು.</verse>
				<verse number="9">ತಮ್ಮ ಪುತ್ರರೂ ನಮ್ಮ ಕರ್ತ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ಪ್ರಾಮಾಣಿಕರು.</verse>
				<verse number="10">ಪ್ರಿಯರೇ, ನೀವೆಲ್ಲರೂ ಒಂದೇ ಅಭಿಪ್ರಾಯವುಳ್ಳವರಾಗಿದ್ದು, ನಿಮ್ಮೊಳಗೆ ಗುಂಪುಗಾರಿಕೆ, ಪಕ್ಷಬೇಧಗಳಿರದೆ, ಒಂದೇ ಮನಸ್ಸು ಮತ್ತು ಒಂದೇ ಆಲೋಚನೆಗಳಲ್ಲಿ ಪರಿಪೂರ್ಣವಾದ ಅನ್ಯೋನ್ಯತೆಯಲ್ಲಿರಬೇಕೆಂದು ನಾನು ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.</verse>
				<verse number="11">ನನ್ನ ಪ್ರಿಯರೇ, ಖ್ಲೋಯೆಯ ಮನೆಯ ಕೆಲವರು, ನಿಮ್ಮೊಳಗೆ ಜಗಳಗಳುಂಟೆಂದು ನನಗೆ ತಿಳಿಸಿದರು.</verse>
				<verse number="12">ನಿಮ್ಮಲ್ಲಿ ಒಬ್ಬನು, “ನಾನು ಪೌಲನವನು,” ಇನ್ನೊಬ್ಬನು, “ನಾನು ಅಪೊಲ್ಲೋಸನವನು,” ಬೇರೊಬ್ಬನು, “ನಾನು ಕೇಫನವನು,” ಇನ್ನೊಬ್ಬನು, “ನಾನು ಕ್ರಿಸ್ತನವನು,” ಎಂದು ಹೇಳುತ್ತೀರಂತೆ.</verse>
				<verse number="13">ಕ್ರಿಸ್ತ ಯೇಸು ವಿಭಾಗವಾಗಿದ್ದಾರೋ? ಪೌಲನು ನಿಮಗೋಸ್ಕರ ಶಿಲುಬೆಗೆ ಹಾಕಿಸಿಕೊಂಡನೋ? ಪೌಲನ ಹೆಸರಿನಲ್ಲಿ ನೀವು ದೀಕ್ಷಾಸ್ನಾನ ತೆಗೆದುಕೊಂಡಿರುವಿರೋ?</verse>
				<verse number="14">ಕ್ರಿಸ್ಪನನ್ನು ಮತ್ತು ಗಾಯನನ್ನು ಹೊರತು ಬೇರೆ ಯಾರಿಗೂ ನಾನು ದೀಕ್ಷಾಸ್ನಾನ ಕೊಡಲಿಲ್ಲ. ಅದಕ್ಕಾಗಿ ನಾನು ದೇವರಿಗೆ ಸ್ತೋತ್ರ ಹೇಳುತ್ತೇನೆ.</verse>
				<verse number="15">ಏಕೆಂದರೆ ನನ್ನ ಹೆಸರಿನಲ್ಲಿ ದೀಕ್ಷಾಸ್ನಾನ ಹೊಂದಿದ್ದಾರೆಂದು ಯಾರೂ ಹೇಳಬಾರದು.</verse>
				<verse number="16">ಹೌದು, ಸ್ತೆಫನನ ಮನೆಯವರಿಗೂ ನಾನು ದೀಕ್ಷಾಸ್ನಾನ ಕೊಟ್ಟಿದ್ದೇನೆ. ಇದನ್ನು ಬಿಟ್ಟು ಯಾರಿಗೂ ನಾನು ದೀಕ್ಷಾಸ್ನಾನ ಕೊಟ್ಟಿದ್ದು ನನ್ನ ಜ್ಞಾಪಕದಲ್ಲಿಲ್ಲ.</verse>
				<verse number="17">ದೀಕ್ಷಾಸ್ನಾನ ಕೊಡುವುದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಕಳುಹಿಸದೆ ಸುವಾರ್ತೆಯನ್ನು ಸಾರುವುದಕ್ಕಾಗಿ ನನ್ನನ್ನು ಕಳುಹಿಸಿದ್ದಾರೆ. ಸುವಾರ್ತೆ ಸಾರುವಂಥದ್ದು ವಾಕ್ಚಾತುರ್ಯದಿಂದಲ್ಲ. ಹಾಗೆ ಸಾರುತ್ತಿದ್ದರೆ ಕ್ರಿಸ್ತ ಯೇಸುವಿನ ಶಿಲುಬೆಯ ಶಕ್ತಿಯು ಬರಿದಾಗಿಬಿಡುತಿತ್ತು.</verse>
				<verse number="18">ಶಿಲುಬೆಯ ಸಂದೇಶವು ವಿನಾಶದ ಮಾರ್ಗದಲ್ಲಿರುವವರಿಗೆ ಬುದ್ದಿಹೀನವಾಗಿದೆ. ರಕ್ಷಣೆ ಹೊಂದುತ್ತಿರುವ ನಮಗಾದರೋ, ಅದು ದೇವರ ಶಕ್ತಿಯಾಗಿದೆ.</verse>
				<verse number="19">ಏಕೆಂದರೆ, ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ಜ್ಞಾನಿಗಳ ಜ್ಞಾನವನ್ನು ನಾನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ನಾನು ನಿರರ್ಥಕ ಮಾಡುವೆನು.”</verse>
				<verse number="20">ಜ್ಞಾನಿಯಾದ ಮನುಷ್ಯನೆಲ್ಲಿ? ಪಂಡಿತನು ಎಲ್ಲಿ? ಈ ಕಾಲದ ತತ್ವಜ್ಞಾನಿ ಎಲ್ಲಿ? ಈ ಲೋಕದ ಜ್ಞಾನವನ್ನು ದೇವರು ಬುದ್ದಿಹೀನತೆಯನ್ನಾಗಿ ಮಾಡಿದ್ದಾರಲ್ಲವೇ?</verse>
				<verse number="21">ಈ ಪ್ರಪಂಚವು ತನ್ನ ಜ್ಞಾನದ ಮೂಲಕ ದೇವರನ್ನು ಅರಿತುಕೊಳ್ಳಲಿಲ್ಲ; ಆದ್ದರಿಂದ ದೇವರ ಜ್ಞಾನದಿಂದ, ನಂಬಿದವರನ್ನು ಪ್ರಸಂಗದ ಬುದ್ದಿಹೀನತೆಯಿಂದ ರಕ್ಷಿಸುವುದು ದೇವರಿಗೆ ಮೆಚ್ಚುಗೆಯಾಯಿತು.</verse>
				<verse number="22">ಯೆಹೂದ್ಯರು ಆಶ್ಚರ್ಯಕರವಾದ ಗುರುತುಗಳನ್ನು ಹುಡುಕುತ್ತಾರೆ. ಗ್ರೀಕರು ಜ್ಞಾನವನ್ನು ಹುಡುಕುತ್ತಾರೆ.</verse>
				<verse number="23">ನಾವಾದರೋ ಶಿಲುಬೆಗೆ ಹಾಕಲಾದ ಕ್ರಿಸ್ತ ಯೇಸುವನ್ನೇ ಪ್ರಸಂಗಿಸುತ್ತಿದ್ದೇವೆ. ಇದು ಯೆಹೂದ್ಯರಿಗೆ ವಿಘ್ನವೂ ಯೆಹೂದ್ಯರಲ್ಲದವರಿಗೆ ಬುದ್ದಿಹೀನತೆಯಾಗಿದೆ.</verse>
				<verse number="24">ಆದರೆ ದೇವರಿಂದ ರಕ್ಷಣೆಗೆ ಕರೆಹೊಂದಿದ ಯೆಹೂದ್ಯರಿಗಾಗಲಿ, ಯೆಹೂದ್ಯರಲ್ಲದವರಿಗಾಗಲಿ ಕ್ರಿಸ್ತ ಯೇಸು ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾರೆ.</verse>
				<verse number="25">ಏಕೆಂದರೆ ದೇವರ ಬುದ್ಧಿಹೀನತೆ ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾಗಿದೆ. ದೇವರ ಬಲಹೀನತೆ ಮನುಷ್ಯರ ಬಲಕ್ಕಿಂತಲೂ ಬಲವುಳ್ಳದ್ದಾಗಿದೆ.</verse>
				<verse number="26">ಪ್ರಿಯರೇ, ನೀವು ದೇವರ ಕರೆಯನ್ನು ಹೊಂದಿದಾಗ ಏನಾಗಿದ್ದಿರೆಂಬುದನ್ನು ಆಲೋಚಿಸಿರಿ. ನಿಮ್ಮೊಳಗೆ ಲೋಕಾನುಸಾರವಾಗಿ ಜ್ಞಾನಿಗಳೂ ಅನೇಕರಿಲ್ಲ, ಪ್ರಭಾವಿಗಳೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.</verse>
				<verse number="27">ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವಂತೆ, ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾರೆ. ದೇವರು ಬಲಿಷ್ಠರನ್ನು ನಾಚಿಕೆಪಡಿಸುವಂತೆ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾರೆ.</verse>
				<verse number="28">ದೇವರು ಈ ಲೋಕದ ಗಣ್ಯರನ್ನು ಏನೂ ಇಲ್ಲದವರನ್ನಾಗಿ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನೂ, ಹೀನೈಸಲಾದವರನ್ನೂ ಕೀಳಾದವರನ್ನೂ, ಆರಿಸಿಕೊಂಡಿದ್ದಾರೆ.</verse>
				<verse number="29">ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿರುವುದಿಲ್ಲ.</verse>
				<verse number="30">ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.</verse>
				<verse number="31">ಪವಿತ್ರ ವೇದದಲ್ಲಿ ಬರೆದಿರುವಂತೆ, “ಹೆಚ್ಚಳ ಪಡುವವನು ಕರ್ತ ದೇವರಲ್ಲಿಯೇ ಹೆಚ್ಚಳ ಪಡಲಿ.”</verse>
			</chapter>
			<chapter number="2">
				<verse number="1">ಪ್ರಿಯರೇ, ನಾನು ನಿಮ್ಮ ಬಳಿಗೆ ಬಂದಾಗ ವಾಕ್ಚಾತುರ್ಯದಿಂದಾಗಲಿ, ಮಾನವೀಯ ಜ್ಞಾನದಿಂದಾಗಲಿ ದೇವರ ವಾಕ್ಯವನ್ನು ಸಾರುವವನಾಗಿ ಬರಲಿಲ್ಲ.</verse>
				<verse number="2">ಶಿಲುಬೆಗೆ ಹಾಕಲಾದ ಯೇಸು ಕ್ರಿಸ್ತನನ್ನೇ ಹೊರತು ನಿಮ್ಮಲ್ಲಿ ಬೇರೆ ಯಾವುದನ್ನೂ ತಿಳಿಯದವನಾಗಿರುವೆನೆಂದು ತೀರ್ಮಾನಿಸಿಕೊಂಡೆನು.</verse>
				<verse number="3">ನಾನು ನಿಮ್ಮ ಬಳಿಗೆ ಬಂದಾಗ ಬಲಹೀನನೂ ಬಹಳವಾಗಿ ಭಯಪಟ್ಟು ನಡುಗುವವನೂ ಆಗಿದ್ದೆನು.</verse>
				<verse number="4">ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಜ್ಞಾನ ಹಾಗೂ ಮನವೊಲಿಸುವ ವಾಕ್ಯಗಳನ್ನು ಪ್ರಯೋಗಿಸದೆ, ದೇವರಾತ್ಮನ ಶಕ್ತಿಯನ್ನೇ ಪ್ರಯೋಗಿಸಿದೆನು.</verse>
				<verse number="5">ನಿಮ್ಮ ನಂಬಿಕೆಯು ಮನುಷ್ಯ ಜ್ಞಾನದ ಮೇಲೆ ಅವಲಂಬಿಸದೆ ದೇವರ ಶಕ್ತಿಯ ಮೇಲೆ ಅವಲಂಬಿಸಬೇಕೆಂದು ನಾನು ಹೀಗೆ ಮಾಡಿದೆನು.</verse>
				<verse number="6">ಹೀಗಿದ್ದರೂ ಪರಿಪೂರ್ಣರಲ್ಲಿ ಜ್ಞಾನದ ಬಗ್ಗೆ ಮಾತನಾಡುತ್ತೇವೆ. ಅದು ಇಹಲೋಕದ ಜ್ಞಾನವಲ್ಲ. ಅಳಿದು ಹೋಗುವ ಇಹಲೋಕದ ಅಧಿಕಾರಿಗಳ ಜ್ಞಾನವೂ ಅಲ್ಲ.</verse>
				<verse number="7">ನಾವು ದೇವರ ರಹಸ್ಯ ಜ್ಞಾನವನ್ನು ಕುರಿತು ಮಾತನಾಡುತ್ತೇವೆ. ಅದು ದೇವರು ನಮ್ಮ ಮಹಿಮೆಗಾಗಿ ಯುಗಗಳ ಮುಂಚೆಯೇ ನೇಮಿಸಿ, ಮರೆಮಾಡಿದ ಜ್ಞಾನವೇ ಆಗಿರುತ್ತದೆ.</verse>
				<verse number="8">ಇದನ್ನು ಇಹಲೋಕದ ಅಧಿಕಾರಿಗಳಲ್ಲಿ ಒಬ್ಬರಾದರೂ ಅರಿಯಲಿಲ್ಲ. ಅರಿತಿದ್ದರೆ, ಅವರು ಮಹಿಮೆಯುಳ್ಳ ಕರ್ತದೇವರನ್ನು ಶಿಲುಬೆಗೇರಿಸುತ್ತಿರಲಿಲ್ಲ.</verse>
				<verse number="9">ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ: “ದೇವರು ತಮ್ಮನ್ನು ಪ್ರೀತಿಸುವವರಿಗಾಗಿ ಸಿದ್ಧ ಮಾಡಿರುವಂಥದ್ದನ್ನು ಯಾವ ಕಣ್ಣೂ ಕಾಣಲಿಲ್ಲ, ಯಾವ ಕಿವಿಯೂ ಕೇಳಲಿಲ್ಲ, ಅದು ಮನುಷ್ಯನ ಹೃದಯದಲ್ಲಿಯೂ ಹುಟ್ಟಲಿಲ್ಲ.”</verse>
				<verse number="10">ನಮಗಾದರೋ ದೇವರು ತಮ್ಮ ಪವಿತ್ರಾತ್ಮರ ಮೂಲಕ ಇವುಗಳನ್ನು ಪ್ರಕಟಿಸಿದ್ದಾರೆ. ಪವಿತ್ರಾತ್ಮರು ಎಲ್ಲಾ ವಿಷಯಗಳನ್ನು ಹಾಗೂ ದೇವರ ಆಳವಾದ ರಹಸ್ಯಗಳನ್ನು ಪರಿಶೋಧಿಸುವವರಾಗಿದ್ದಾರೆ.</verse>
				<verse number="11">ಮನುಷ್ಯನ ಆಲೋಚನೆಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿಯುವುದು? ಹಾಗೆಯೇ, ದೇವರ ಆಲೋಚನೆಗಳನ್ನು ಪವಿತ್ರಾತ್ಮರಲ್ಲದೆ ಬೇರೆ ಯಾರೂ ಗ್ರಹಿಸಲಾರರು.</verse>
				<verse number="12">ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವಂಥವುಗಳನ್ನು ತಿಳಿದುಕೊಳ್ಳುವುದಕ್ಕಾಗಿ ದೇವರಿಂದ ಬಂದ ಆತ್ಮರನ್ನು ಹೊಂದಿದ್ದೇವೆ.</verse>
				<verse number="13">ನಾವು ಮನುಷ್ಯ ಜ್ಞಾನವು ಕಲಿಸಿದ ಮಾತುಗಳಿಂದ ಮಾತನಾಡದೆ, ದೇವರ ಆತ್ಮರು ಕಲಿಸಿಕೊಟ್ಟ ಮಾತುಗಳಿಂದ ಇವುಗಳನ್ನು ಮಾತಾಡುತ್ತೇವೆ. ಹೀಗೆ ನಾವು ಆತ್ಮಿಕ ಸತ್ಯಗಳನ್ನು ದೇವರ ಆತ್ಮರ ಮಾತುಗಳಿಂದಲೇ ಸ್ಪಷ್ಟಪಡಿಸುತ್ತೇವೆ.</verse>
				<verse number="14">ಆದರೆ ಭೌತಿಕ ಮನುಷ್ಯನು ದೇವರಾತ್ಮರ ವಿಷಯಗಳನ್ನು ಸ್ವೀಕರಿಸುವುದಿಲ್ಲ. ಅವು ಅವನಿಗೆ ಬುದ್ಧಿಹೀನವಾಗಿ ತೋರುತ್ತವೆ. ಏಕೆಂದರೆ ಆತ್ಮಿಕ ವಿವೇಚನೆಯಿಂದ ತಿಳಿಯಬೇಕಾಗಿದ್ದ ಕಾರಣ ಅವನು ಅವುಗಳನ್ನು ತಿಳಿದುಕೊಳ್ಳಲಾರನು.</verse>
				<verse number="15">ಆದರೆ ಆತ್ಮಿಕ ಮನುಷ್ಯನು ಎಲ್ಲವನ್ನೂ ವಿವೇಚಿಸಿಕೊಳ್ಳುತ್ತಾನೆ. ಆದರೆ ಅವನಿಗೆ ಬೇರೆ ಯಾರೂ ತೀರ್ಪುಮಾಡಲಾಗದು.</verse>
				<verse number="16">ಏಕೆಂದರೆ, “ಕರ್ತದೇವರ ಮನಸ್ಸನ್ನು ತಿಳಿದುಕೊಂಡು, ಅವರಿಗೆ ಉಪದೇಶಿಸುವವನಾರು?” ಆದರೆ ನಮಗೆ ಕ್ರಿಸ್ತ ಯೇಸುವಿನ ಮನಸ್ಸು ಇದೆ.</verse>
			</chapter>
			<chapter number="3">
				<verse number="1">ಪ್ರಿಯರೇ, ನೀವು ದೇವರಾತ್ಮರಿಗೆ ತಕ್ಕಂತೆ ಬಾಳುವವರಾಗಿ ನಾನು ನಿಮ್ಮ ಸಂಗಡ ಮಾತನಾಡುತ್ತಾ ಇಲ್ಲ. ನೀವು ಇನ್ನೂ ಕ್ರಿಸ್ತ ಯೇಸುವಿನಲ್ಲಿ ಕೂಸುಗಳೂ ಪ್ರಾಪಂಚಿಕರೂ ಆಗಿರುವಿರೆಂದು ಭಾವಿಸಿ ನಿಮ್ಮ ಸಂಗಡ ಮಾತನಾಡಬೇಕಾಯಿತು.</verse>
				<verse number="2">ನಾನು ನಿಮಗೆ ಹಾಲು ಕೊಟ್ಟೆನು. ಗಟ್ಟಿ ಆಹಾರವನ್ನು ಕೊಡಲಿಲ್ಲ, ಏಕೆಂದರೆ ನಿಮಗೆ ಶಕ್ತಿ ಇರಲಿಲ್ಲ, ಈಗಲಾದರೂ ನಿಮಗೆ ಶಕ್ತಿಯಿಲ್ಲ.</verse>
				<verse number="3">ಏಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ಹೇಗೆಂದರೆ, ನಿಮ್ಮೊಳಗೆ ಅಸೂಯೆ, ಜಗಳಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದೀರಲ್ಲದೆ ಕೇವಲ ಮಾನವರಂತೆ ನಡೆಯುತ್ತೀರಲ್ಲವೇ?</verse>
				<verse number="4">ಒಬ್ಬನು, “ನಾನು ಪೌಲನವನು,” ಎಂದು ಮತ್ತೊಬ್ಬನು, “ನಾನು ಅಪೊಲ್ಲೋಸನವನು,” ಎಂದೂ ಹೇಳುತ್ತಿರುವಾಗ, ನೀವು ಕೇವಲ ಮಾನವರಂತೆ ಆಗಿದ್ದೀರಲ್ಲವೇ?</verse>
				<verse number="5">ಹಾಗಾದರೆ, ಅಪೊಲ್ಲೋಸನು ಯಾರು? ಪೌಲನು ಯಾರು? ಅವನವನಿಗೆ ಕರ್ತದೇವರು ನೇಮಿಸಿದ ಕಾರ್ಯದ ಪ್ರಕಾರ ಅವರವರ ಮುಖಾಂತರ ನೀವು ನಂಬಿದ್ದೀರಿ. ಅವರು ಕೇವಲ ಸೇವಕರಾಗಿದ್ದಾರೆ.</verse>
				<verse number="6">ನಾನು ಬೀಜವನ್ನು ಬಿತ್ತಿದೆನು, ಅಪೊಲ್ಲೋಸನು ನೀರು ಹಾಕಿದನು, ಆದರೆ ಬೆಳೆಸಿದವರು ದೇವರೇ.</verse>
				<verse number="7">ಹೀಗಿರಲಾಗಿ ನೆಡುವವನಾಗಲಿ, ನೀರು ಹಾಕುವವನಾಗಲಿ ಪ್ರಾಮುಖ್ಯರಾಗಿರದೆ, ಬೆಳೆಸುವ ದೇವರೇ ಬಹು ಪ್ರಾಮುಖ್ಯವಾದವರು.</verse>
				<verse number="8">ನೆಡುವವನೂ ನೀರು ಹಾಕುವವನೂ ಒಂದೇ ಉದ್ದೇಶವುಳ್ಳವರಾಗಿರುತ್ತಾರೆ. ಪ್ರತಿಯೊಬ್ಬನಿಗೆ ಅವನವನ ಶ್ರಮಕ್ಕೆ ತಕ್ಕಂತೆ ಪ್ರತಿಫಲ ದೊರೆಯುವುದು.</verse>
				<verse number="9">ನಾವು ದೇವರ ಜೊತೆಕೆಲಸದವರು. ನೀವು ದೇವರ ಹೊಲವೂ ದೇವರ ಕಟ್ಟಡವೂ ಆಗಿದ್ದೀರಿ.</verse>
				<verse number="10">ದೇವರು ನನಗೆ ಕೊಟ್ಟ ಕೃಪೆಗೆ ಅನುಸಾರವಾಗಿ, ನಾನು ಜ್ಞಾನಿಯಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ಪ್ರತಿಯೊಬ್ಬನೂ ತಾನು ಅದರ ಮೇಲೆ ಎಷ್ಟು ಶ್ರದ್ಧೆಯಿಂದ ಕಟ್ಟುತ್ತಾನೆಂದು ನೋಡಿಕೊಳ್ಳಬೇಕು.</verse>
				<verse number="11">ಕ್ರಿಸ್ತ ಯೇಸುವೆಂಬ ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.</verse>
				<verse number="12">ಯಾವನಾದರೂ ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನ, ಕಟ್ಟಿಗೆ, ಹುಲ್ಲು ಅಥವಾ ಜೊಂಡು ಮುಂತಾದವುಗಳಿಂದ ಕಟ್ಟಿದರೆ,</verse>
				<verse number="13">ಕ್ರಿಸ್ತ ಯೇಸುವಿನ ದಿನವು ಇದನ್ನು ಬಹಿರಂಗಕ್ಕೆ ತರುವಾಗ, ಅವನವನ ಕೆಲಸವು ಏನಾಗಿರುವುದೆಂಬುದು ವ್ಯಕ್ತವಾಗುವುದು. ಏಕೆಂದರೆ ಅದು ಬೆಂಕಿಯಿಂದ ಪ್ರಕಟವಾಗುವುದು. ಪ್ರತಿಯೊಬ್ಬನ ಕೆಲಸದ ಯೋಗ್ಯತೆಯನ್ನು ಬೆಂಕಿಯೇ ಪರೀಕ್ಷಿಸುವುದು.</verse>
				<verse number="14">ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಬೆಂಕಿಯಿಂದ ತಪ್ಪಿಸಿಕೊಂಡು ಉಳಿದರೆ, ಅವನಿಗೆ ಪ್ರತಿಫಲ ಸಿಕ್ಕುವುದು.</verse>
				<verse number="15">ಒಬ್ಬನು ಕಟ್ಟಿದ್ದು ಸುಟ್ಟು ಹೋದರೆ, ಅವನಿಗೆ ನಷ್ಟವಾಗುವುದು, ಅವನಾದರೋ ರಕ್ಷಣೆಹೊಂದುವನು. ಆದರೆ ಬೆಂಕಿಯ ಜ್ವಾಲೆಗಳಿಂದ ತಪ್ಪಿಸಿಕೊಂಡವನ ಹಾಗಿರುವನು.</verse>
				<verse number="16">ನೀವು ದೇವರ ಆಲಯವಾಗಿದ್ದೀರೆಂಬುದೂ ದೇವರ ಆತ್ಮ ನಿಮ್ಮಲ್ಲಿ ವಾಸ ಮಾಡುತ್ತಾರೆಂಬುದೂ ನಿಮಗೆ ಗೊತ್ತಿಲ್ಲವೋ?</verse>
				<verse number="17">ಯಾರಾದರೂ ದೇವರ ಆಲಯವನ್ನು ನಾಶಪಡಿಸಿದರೆ, ದೇವರು ಅವರನ್ನು ನಾಶಪಡಿಸುವರು. ಏಕೆಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.</verse>
				<verse number="18">ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ. ನಿಮ್ಮಲ್ಲಿ ಯಾರಾದರೂ ಇಹಲೋಕ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸಿಕೊಂಡರೆ, ಅಂಥವನು ಜ್ಞಾನಿಯಾಗುವಂತೆ ಮೂರ್ಖನಾಗಲಿ.</verse>
				<verse number="19">ಏಕೆಂದರೆ ಇಹಲೋಕ ಜ್ಞಾನವು ದೇವರ ದೃಷ್ಟಿಯಲ್ಲಿ ಮೂರ್ಖತನವಾಗಿದೆ, ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, “ದೇವರು ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿಯೇ ಹಿಡಿಯುವರು,” ಎಂದೂ</verse>
				<verse number="20">“ಜ್ಞಾನಿಗಳ ಯೋಚನೆಗಳು ವ್ಯರ್ಥವಾದವುಗಳೆಂದು ಕರ್ತದೇವರು ತಿಳಿದುಕೊಳ್ಳುತ್ತಾರೆ,” ಎಂದೂ ಬರೆದಿದೆಯಲ್ಲಾ.</verse>
				<verse number="21">ಆದಕಾರಣ ಇನ್ನು ಮೇಲೆ ನಾಯಕರ ಬಗ್ಗೆ ಯಾರೂ ಹೊಗಳುವುದು ಬೇಡ! ಏಕೆಂದರೆ ಸಮಸ್ತವೂ ನಿಮ್ಮದು.</verse>
				<verse number="22">ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ, ಲೋಕವಾಗಲಿ, ಜೀವವಾಗಲಿ, ಮರಣವಾಗಲಿ, ವರ್ತಮಾನದ ಸಂಗತಿಗಳಾಗಲಿ, ಭವಿಷ್ಯತ್ಕಾಲದ ಸಂಗತಿಗಳಾಗಲಿ ಸಮಸ್ತವೂ ನಿಮ್ಮವೇ.</verse>
				<verse number="23">ನೀವು ಕ್ರಿಸ್ತ ಯೇಸುವಿನವರು, ಕ್ರಿಸ್ತ ಯೇಸು ದೇವರವರು.</verse>
			</chapter>
			<chapter number="4">
				<verse number="1">ಆದ್ದರಿಂದ ನೀವು ಈ ರೀತಿಯಾಗಿ ನಮ್ಮನ್ನು ಪರಿಗಣಿಸಬೇಕು: ನಾವು ಕ್ರಿಸ್ತ ಯೇಸುವಿನ ದಾಸರೆಂತಲೂ ದೇವರ ರಹಸ್ಯಗಳ ನಂಬಿಗಸ್ತ ನಿರ್ವಾಹಕರೆಂದೂ ಪರಿಗಣಿಸಿರಿ.</verse>
				<verse number="2">ಹೀಗಿರುವುದರಿಂದ ನಂಬಿಗಸ್ತರಾಗಿರುವುದು ನಿರ್ವಾಹಕರಲ್ಲಿ ಅವಶ್ಯವಾಗಿ ಕಾಣತಕ್ಕ ಸದ್ಗುಣವಾಗಿದೆ.</verse>
				<verse number="3">ನನಗಾದರೋ ನಿಮ್ಮಿಂದಾಗಲಿ, ಮನುಷ್ಯರ ನ್ಯಾಯಾಲಯದಿಂದಾಗಲಿ ವಿಚಾರಣೆಯಾಗುವುದು ಅತ್ಯಲ್ಪ ಕಾರ್ಯವಾಗಿದೆ. ನನ್ನನ್ನು ನಾನೇ ನ್ಯಾಯತೀರ್ಪು ಮಾಡಿಕೊಳ್ಳುವುದೂ ಇಲ್ಲ.</verse>
				<verse number="4">ನನ್ನ ಮನಸ್ಸಾಕ್ಷಿಯು ಶುದ್ಧವಾಗಿದೆ. ಆದರೆ ಅದು ನನ್ನನ್ನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯತೀರಿಸುವವರು ಕರ್ತದೇವರೇ,</verse>
				<verse number="5">ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.</verse>
				<verse number="6">ಪ್ರಿಯರೇ, ನಾನು ನಿಮ್ಮ ಪ್ರಯೋಜನಕ್ಕಾಗಿ ಇವುಗಳನ್ನು ದೃಷ್ಟಾಂತರೂಪವಾಗಿ ನನ್ನ ವಿಷಯದಲ್ಲಿಯೂ ಅಪೊಲ್ಲೋಸನ ವಿಷಯದಲ್ಲಿಯೂ ಹೇಳಿದ್ದೇನೆ. “ನೀವು ಬರೆದಿರುವುದಕ್ಕೆ ಮೀರಿ ಹೋಗಬಾರದು,” ಎಂಬ ಹೇಳಿಕೆಯ ಅರ್ಥವನ್ನು ನಮ್ಮಿಂದ ಕಲಿತುಕೊಳ್ಳಬಹುದು. ಆಗ ನಿಮ್ಮಲ್ಲಿ ಒಬ್ಬರು ಮತ್ತೊಬ್ಬರನ್ನು ಅನುಸರಿಸುತ್ತಿದ್ದೇವೆಂದು ಹೇಳಿಕೊಳ್ಳುವುದರ ವಿರೋಧವಾಗಿ ಹೆಮ್ಮೆ ಪಡುವುದಿಲ್ಲ.</verse>
				<verse number="7">ನಿಮ್ಮನ್ನು ಇತರರಿಗಿಂತಲೂ ವ್ಯತ್ಯಾಸವುಳ್ಳವರಾಗಿ ಮಾಡಿದವರು ಯಾರು? ನೀವು ದೇವರಿಂದ ಪಡೆಯದಿರುವಂಥದು ನಿಮ್ಮಲ್ಲಿ ಯಾವುದಾದರೂ ಇದೆಯೇ? ಹೀಗೆ ಎಲ್ಲವನ್ನೂ ಪಡೆದ ಮೇಲೆ, ಪಡೆಯದವರಂತೆ ನೀವು ಹೆಮ್ಮೆ ಪಟ್ಟುಕೊಳ್ಳುವುದೇಕೆ?</verse>
				<verse number="8">ಈಗ ನೀವು ತೃಪ್ತರಾಗಿದ್ದೀರಿ! ಈಗಾಗಲೇ ಐಶ್ವರ್ಯವಂತರಾಗಿದ್ದೀರಿ. ನಮ್ಮ ಸಹಾಯವಿಲ್ಲದೆ ಆಳುತ್ತಿದ್ದೀರಿ. ನೀವು ನಿಜವಾಗಿಯೂ ಅರಸರಾಗಿದ್ದರೆ, ನಾವು ಸಹ ನಿಮ್ಮೊಂದಿಗೆ ಸೇರಿ ಆಳುತ್ತಿದ್ದೇವಲ್ಲವೇ?</verse>
				<verse number="9">ಅಪೊಸ್ತಲರಾದ ನಮ್ಮನ್ನು ಮರಣದಂಡನೆ ಹೊಂದಿದವರಂತೆ ದೇವರು ಮೆರವಣಿಗೆಯ ಕಡೆಯವರನ್ನಾಗಿ ಮಾಡಿ ತೋರಿಸಿದ್ದಾರೆಂದು ನನಗನಿಸುತ್ತದೆ. ಏಕೆಂದರೆ, ದೇವರು ನಮ್ಮನ್ನು ದೇವದೂತರಿಗೂ ಮನುಷ್ಯರಿಗೂ ಇಡೀ ಜಗತ್ತಿಗೂ ಹಾಸ್ಯಾಸ್ಪದವಾದ ನೋಟವನ್ನಾಗಿ ಮಾಡಿದ್ದಾರೆ.</verse>
				<verse number="10">ನಾವು ಕ್ರಿಸ್ತ ಯೇಸುವಿನ ನಿಮಿತ್ತ ಮೂರ್ಖರಾಗಿದ್ದೇವೆ! ನೀವೋ ಕ್ರಿಸ್ತ ಯೇಸುವಿನಲ್ಲಿ ಬುದ್ಧಿವಂತರು, ನಾವೋ ಬಲಹೀನರು. ನೀವು ಬಲಿಷ್ಠರು, ನೀವು ಮಾನವಂತರು, ನಾವೋ ಮಾನಹೀನರು!</verse>
				<verse number="11">ಈ ಗಳಿಗೆಯವರೆಗೂ ನಾವು ಹಸಿದು ಬಾಯಾರಿದವರೂ, ಸಾಕಷ್ಟು ವಸ್ತ್ರವಿಲ್ಲದವರೂ, ಕ್ರೂರವಾಗಿ ಪೆಟ್ಟಿಗೆ ಗುರಿಯಾಗುವವರೂ, ಮನೆಯಿಲ್ಲದವರೂ,</verse>
				<verse number="12">ಸ್ವಂತ ಕೈಯಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಶಪಿಸಿಕೊಂಡು ಆಶೀರ್ವದಿಸುತ್ತೇವೆ, ಹಿಂಸೆಪಟ್ಟು ಸಹಿಸಿಕೊಳ್ಳುತ್ತೇವೆ,</verse>
				<verse number="13">ಅಪಕೀರ್ತಿ ಹೊಂದಿ ಸಮಾಧಾನವಾಗುತ್ತೇವೆ. ನಾವು ಈಗಿನ ವರೆಗೂ ಭೂಮಿಯ ಕಸವೋ ವಿಶ್ವದ ಹೊಲಸೋ ಎಂಬಂತೆ ಆಗಿದ್ದೇವೆ.</verse>
				<verse number="14">ನಾನು ನಿಮ್ಮನ್ನು ನಾಚಿಕೆಪಡಿಸುವುದಕ್ಕಾಗಿ ಬರೆಯದೆ, ನನ್ನ ಪ್ರಿಯ ಮಕ್ಕಳೆಂದು ನಿಮಗೆ ಬುದ್ಧಿ ಹೇಳುತ್ತೇನಷ್ಟೆ.</verse>
				<verse number="15">ಏಕೆಂದರೆ, ನಿಮಗೆ ಕ್ರಿಸ್ತ ಯೇಸುವಿನಲ್ಲಿ ಹತ್ತು ಸಾವಿರ ಮಂದಿ ಪೋಷಕರು ಇದ್ದರೂ, ತಂದೆಗಳು ಬಹುಮಂದಿ ಇಲ್ಲ. ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ನಾನು ನಿಮ್ಮ ತಂದೆಯಾದೆನು.</verse>
				<verse number="16">ಆದ್ದರಿಂದ ನೀವು ನನ್ನನ್ನು ಅನುಕರಣೆ ಮಾಡುವವರಾಗಿ ಇರಬೇಕು ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.</verse>
				<verse number="17">ಇದರ ನಿಮಿತ್ತವೇ ಕರ್ತ ದೇವರಲ್ಲಿ ನಂಬಿಗಸ್ತನಾಗಿರುವ ನನ್ನ ಮಗ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ಅವನು ನನಗೆ ಪ್ರಿಯನಾಗಿದ್ದಾನೆ. ನಾನು ಎಲ್ಲಾ ಕಡೆಗಳಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವುದರ ಪ್ರಕಾರ, ಅವನು ಕ್ರಿಸ್ತ ಯೇಸುವಿನಲ್ಲಿರುವ ನನ್ನ ನಡವಳಿಕೆಯನ್ನು, ನಿಮ್ಮ ನೆನಪಿಗೆ ತರುವನು.</verse>
				<verse number="18">ನಾನು ನಿಮ್ಮಲ್ಲಿಗೆ ಬರುವುದಿಲ್ಲವೆಂದು ಕೆಲವರು ಅಹಂಕಾರಿಗಳಾಗಿದ್ದಾರೆ.</verse>
				<verse number="19">ಆದರೆ ಕರ್ತದೇವರ ಚಿತ್ತವಿದ್ದರೆ, ನಾನು ಬೇಗ ನಿಮ್ಮ ಬಳಿಗೆ ಬಂದು, ಅಹಂಕಾರಿಗಳ ಮಾತನ್ನಲ್ಲ, ಅವರಿಗೆ ಎಷ್ಟು ಶಕ್ತಿ ಇದೆ ಎಂಬುವುದನ್ನು ಕಂಡುಕೊಳ್ಳುವೆನು.</verse>
				<verse number="20">ಏಕೆಂದರೆ ದೇವರ ರಾಜ್ಯವು ಮಾತಿನಲ್ಲಿ ಅಲ್ಲ, ಶಕ್ತಿಯಲ್ಲಿ ಇದೆ.</verse>
				<verse number="21">ಶಿಸ್ತಿನ ಬೆತ್ತವನ್ನು ಹಿಡಿದು ಬಿಗಿಯಲು ನಿಮ್ಮ ಬಳಿ ಬರಲೋ? ಅಥವಾ ಪ್ರೀತಿ ಸೌಮ್ಯದಿಂದ ಬರಲೋ? ನಿಮಗೆ ಯಾವುದು ಇಷ್ಟ?</verse>
			</chapter>
			<chapter number="5">
				<verse number="1">ಯೆಹೂದ್ಯರಲ್ಲದವರಲ್ಲಿ ನಡೆಯದೇ ಇರುವಂಥ ಅನೈತಿಕತೆ ನಿಮ್ಮಲ್ಲಿದೆಯೆಂದು ವಾಸ್ತವವಾಗಿ ವರದಿ ಬಂದಿದೆ: ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ.</verse>
				<verse number="2">ಹೀಗಿದ್ದರೂ ಗರ್ವಪಡುತ್ತಿದ್ದೀರಲ್ಲಾ! ನೀವು ದುಃಖಪಟ್ಟು, ಈ ಕಾರ್ಯ ಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸಬೇಕಲ್ಲವೇ?</verse>
				<verse number="3">ನಾನು ಸ್ವತಃ ನಿಮ್ಮ ಮಧ್ಯದಲ್ಲಿ ಇರದಿದ್ದರೂ ಆತ್ಮದಲ್ಲಿ ನಿಮ್ಮೊಂದಿಗಿದ್ದೇನೆ. ಈ ಕಾರ್ಯಮಾಡಿದವನ ಮೇಲೆ ಆಗಲೇ ಹತ್ತಿರವಿದ್ದವನಂತೆ ನಮಗೆ ಕರ್ತ ಆಗಿರುವ ಯೇಸುವಿನ ಹೆಸರಿನಲ್ಲಿ ತೀರ್ಪುಮಾಡಿದ್ದೇನೆ.</verse>
				<verse number="4">ನೀವು ಕರ್ತ ಯೇಸುವಿನ ಹೆಸರಿನಲ್ಲಿ ಸಭೆಯಾಗಿ ಬಂದು ಸೇರಿದಾಗ, ನಾನೂ ಆತ್ಮದಲ್ಲಿ ನಿಮ್ಮೊಂದಿಗಿದ್ದು ನಮಗೆ ಕರ್ತ ಆಗಿರುವ ಯೇಸುವಿನ ಸಾನಿಧ್ಯ ಶಕ್ತಿಯೊಂದಿರುವಾಗ,</verse>
				<verse number="5">ಕರ್ತ ಯೇಸುವಿನ ಪುನರಾಗಮನ ದಿನದಲ್ಲಿ ಆ ಮನುಷ್ಯನ ಆತ್ಮವು ರಕ್ಷಣೆ ಹೊಂದುವಂತೆಯೂ ಅವನ ಪಾಪಭರಿತ ಶರೀರವು ನಾಶವಾಗುವಂತೆಯೂ ಅವನನ್ನು ಸೈತಾನನಿಗೆ ಒಪ್ಪಿಸಿ ಬಿಡುತ್ತೇನೆ.</verse>
				<verse number="6">ನೀವು ಜಂಬ ಕೊಚ್ಚಿಕೊಳ್ಳುವುದು ಸರಿಯಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?</verse>
				<verse number="7">ಹೊಸ ಕಣಕವಾಗುವಂತೆ ಹುಳಿಯನ್ನು ತೆಗೆದುಹಾಕಿರಿ. ನೀವು ಹುಳಿಯಿಲ್ಲದವರಾಗಿದ್ದೀರಲ್ಲ. ಏಕೆಂದರೆ ನಮ್ಮ ಪಸ್ಕದ ಕುರಿಯಾದ ಕ್ರಿಸ್ತ ಯೇಸು ಯಜ್ಞಾರ್ಪಿತನಾಗಿದ್ದಾರೆ.</verse>
				<verse number="8">ಆದಕಾರಣ ಹಗೆತನ, ದುಷ್ಟತನ, ಎಂಬ ಹಳೇ ಹುಳಿಯಿಂದಲ್ಲ, ಯಥಾರ್ಥತೆ ಹಾಗೂ ಸತ್ಯ ಎಂಬ ಹುಳಿಯಿಲ್ಲದ ರೊಟ್ಟಿಯಿಂದಲೇ ಹಬ್ಬವನ್ನು ಆಚರಿಸೋಣ.</verse>
				<verse number="9">ಅನೈತಿಕರೊಡನೆ ಸಹವಾಸ ಮಾಡಬಾರದೆಂದು ನಾನು ಪತ್ರದಲ್ಲಿ ಬರೆದಿದ್ದೆನಷ್ಟೆ.</verse>
				<verse number="10">ಈ ಲೋಕದಲ್ಲಿರುವ ಎಲ್ಲಾ ಅನೈತಿಕರು, ಲೋಭಿಗಳು, ಸುಲಿಗೆ ಮಾಡುವವರು, ವಿಗ್ರಹಾರಾಧಕರು ಇಂಥವರ ಸಹವಾಸವನ್ನು ನೀವು ಬಿಟ್ಟು ಇರಬೇಕೆಂಬುದು ನನ್ನ ಅರ್ಥವಲ್ಲ. ಹಾಗಿದ್ದರೆ, ನೀವು ಈ ಲೋಕವನ್ನೇ ಬಿಟ್ಟು ಹೋಗಬೇಕಾಗುವುದು.</verse>
				<verse number="11">ಆದರೆ ಸಹೋದರಿ ಅಥವಾ ಸಹೋದರನೆನಿಸಿಕೊಂಡವನು ಜಾರನಾದರೂ ಲೋಭಿಯಾದರೂ ವಿಗ್ರಹಾರಾಧಕನಾದರೂ ಪರನಿಂದಕನಾದರೂ ಕುಡುಕನಾದರೂ ಸುಲಿಗೆ ಮಾಡುವವನಾದರೂ ಆಗಿದ್ದರೆ, ಅಂಥವರ ಸಹವಾಸ ಮಾಡಬೇಡಿರಿ. ಅಂಥವರ ಸಂಗಡ ಊಟ ಮಾಡಲೂ ಬೇಡಿರಿ ಎಂದು ಈಗ ಬರೆಯುತ್ತಿದ್ದೇನೆ.</verse>
				<verse number="12">ಸಭೆಗೆ ಸೇರದಿರುವ ಹೊರಗಿನವರನ್ನು ತೀರ್ಪುಮಾಡುವುದಕ್ಕೆ ನಾನು ಯಾರು? ಸಭೆಯ ಒಳಗಿನವರನ್ನು ತೀರ್ಪುಮಾಡಬೇಕಾದವರು ನೀವಲ್ಲವೇ?</verse>
				<verse number="13">ಆದರೆ ಹೊರಗಿನವರನ್ನು ತೀರ್ಪುಮಾಡುವವರು ದೇವರೇ. “ಆ ದುಷ್ಟನನ್ನು ನಿಮ್ಮಿಂದ ತೆಗೆದು ಹೊರಗೆ ಹಾಕಿರಿ.”</verse>
			</chapter>
			<chapter number="6">
				<verse number="1">ನಿಮ್ಮಲ್ಲಿ ಯಾವನಿಗಾದರೂ ಮತ್ತೊಬ್ಬನ ಮೇಲೆ ವ್ಯಾಜ್ಯವಿದ್ದರೆ, ನ್ಯಾಯವಿಚಾರಣೆಗಾಗಿ ಕರ್ತದೇವರ ಜನರ ಮುಂದೆ ಹೋಗದೆ, ಭಕ್ತಿಹೀನರ ಮುಂದೆ ಹೋಗುವುದಕ್ಕೆ ಧೈರ್ಯವಿದೆಯೋ?</verse>
				<verse number="2">ಕರ್ತದೇವರ ಜನರು ಲೋಕಕ್ಕೆ ತೀರ್ಪುಮಾಡುವರೆಂಬುದು ನಿಮಗೆ ತಿಳಿಯದೋ? ನೀವೇ ಲೋಕವನ್ನು ನ್ಯಾಯತೀರ್ಪು ಮಾಡಬೇಕಾಗಿರುವಲ್ಲಿ, ಅತ್ಯಲ್ಪ ಸಂಗತಿಗಳನ್ನು ಕುರಿತು ತೀರ್ಪುಮಾಡುವುದಕ್ಕೆ ನೀವು ಅಯೋಗ್ಯರಾಗಿದ್ದೀರೋ?</verse>
				<verse number="3">ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಈ ಜೀವನದ ವ್ಯಾಜ್ಯಗಳನ್ನು ಕುರಿತು ತೀರ್ಪು ಮಾಡುವುದು ಎಷ್ಟು ಸುಲಭವಲ್ಲವೇ?</verse>
				<verse number="4">ಆದ್ದರಿಂದ ಇಂಥ ವ್ಯಾಜ್ಯಗಳ ಬಗ್ಗೆ ವ್ಯಾಜ್ಯಗಳಿದ್ದರೂ ಸಭೆಯಲ್ಲಿ ಮರ್ಯಾದೆ ಇಲ್ಲದವರನ್ನು ನ್ಯಾಯಾಧೀಶರಾಗಿ ನೇಮಿಸುವಿರೋ?</verse>
				<verse number="5">ನಿಮ್ಮಲ್ಲಿ ನಾಚಿಕೆ ಹುಟ್ಟಿಸುವುದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರನ ನ್ಯಾಯವನ್ನು ವಿವೇಚಿಸಿ ತೀರ್ಮಾನ ಕೊಡುವ ಜ್ಞಾನಿಯು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?</verse>
				<verse number="6">ಇದಕ್ಕೆ ಬದಲಾಗಿ ಒಬ್ಬ ಸಹೋದರನು ಇನ್ನೊಬ್ಬ ಸಹೋದರನ ವಿರೋಧವಾಗಿ ನ್ಯಾಯಾಲಯಕ್ಕೆ ಹೋಗುತ್ತಾನೆ. ಅದೂ ಅವಿಶ್ವಾಸಿಗಳ ಮುಂದೆ ನ್ಯಾಯಕ್ಕಾಗಿ ಹೋಗುವುದು ಸರಿಯೇ?</verse>
				<verse number="7">ನಿಮ್ಮ ನಿಮ್ಮಲ್ಲಿ ವ್ಯಾಜ್ಯವಿರುವುದೇ, ನೀವು ಈಗಾಗಲೇ ಸಂಪೂರ್ಣವಾಗಿ ಸೋತವರೆಂಬುದಕ್ಕೆ ಸೂಚನೆಗಳಾಗಿವೆ. ಆದರೆ ಅನ್ಯಾಯವನ್ನು ಏಕೆ ಸಹಿಸಬಾರದು? ಏಕೆ ಮೋಸಹೊಂದಬಾರದು?</verse>
				<verse number="8">ಅದಕ್ಕೆ ಬದಲಾಗಿ ನೀವೇ ನಿಮ್ಮ ಸಹೋದರರಿಗೆ ಅನ್ಯಾಯ ಮಾಡಿ ಮೋಸಮಾಡುತ್ತೀರಲ್ಲಾ?</verse>
				<verse number="9">ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ: ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,</verse>
				<verse number="10">ಕಳ್ಳರು, ಲೋಭಿಗಳು, ಕುಡುಕರು, ಬೈಯ್ಯುವವರು, ಸುಲಿಗೆ ಮಾಡುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.</verse>
				<verse number="11">ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೂ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಿಂದಲೂ ನೀವು ತೊಳೆದು, ಶುದ್ಧೀಕರಣ ಹೊಂದಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.</verse>
				<verse number="12">“ನನಗೆ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೂ ಹಕ್ಕಿದೆ” ಎಂದು ನೀವು ಹೇಳುತ್ತೀರಿ. ಆದರೆ ಎಲ್ಲವೂ ನನಗೆ ಪ್ರಯೋಜನಕರವಾಗಿರುವುದಿಲ್ಲ. ನನಗೆ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೆ ಹಕ್ಕಿದೆ; ಆದರೆ ನಾನು ಯಾವುದಕ್ಕೂ ಗುಲಾಮನಾಗಿರುವುದಿಲ್ಲ.</verse>
				<verse number="13">“ಆಹಾರವು ಹೊಟ್ಟೆಗಾಗಿಯೂ, ಹೊಟ್ಟೆಯು ಆಹಾರಕ್ಕಾಗಿಯೂ ಇದೆ,” ಎಂದು ನೀವು ಹೇಳುತ್ತೀರಿ. ಆದರೆ ದೇವರು ಇವೆರಡನ್ನೂ ನಾಶಮಾಡುವರು. ದೇಹವು ಲೈಂಗಿಕ ಅನೈತಿಕತೆಗಾಗಿರುವಂಥದ್ದಲ್ಲ, ಆದರೆ ಕರ್ತ ದೇವರಿಗೋಸ್ಕರವಾಗಿದೆ. ಕರ್ತದೇವರು ದೇಹಕ್ಕೋಸ್ಕರ ಇದ್ದಾರೆ.</verse>
				<verse number="14">ದೇವರು ತಮ್ಮ ಶಕ್ತಿಯಿಂದ ನಮಗೆ ಕರ್ತ ಆಗಿರುವ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರು ಮತ್ತು ನಮ್ಮನ್ನೂ ಎಬ್ಬಿಸುವರು.</verse>
				<verse number="15">ನಿಮ್ಮ ದೇಹಗಳು ಕ್ರಿಸ್ತ ಯೇಸುವಿನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ನಾವು ಕ್ರಿಸ್ತ ಯೇಸುವಿನ ಅಂಗಗಳಾಗಿರುವಂಥವುಗಳನ್ನೇ ತೆಗೆದುಕೊಂಡು ವೇಶ್ಯೆಯ ಅಂಗಗಳನ್ನಾಗಿ ಮಾಡಬಹುದೇ? ಎಂದಿಗೂ ಬೇಡ.</verse>
				<verse number="16">ವೇಶ್ಯೆಯನ್ನು ಸೇರುವವನು ಅವಳೊಂದಿಗೆ ಒಂದೇ ದೇಹವಾಗುವನೆಂಬುದು ನಿಮಗೆ ತಿಳಿಯದೋ? “ಅವರಿಬ್ಬರೂ ಒಂದೇ ಶರೀರವಾಗಿರುವರು,” ಎಂದು ಹೇಳಲಾಗಿದೆಯಲ್ಲವೇ?</verse>
				<verse number="17">ಆದರೆ ಕರ್ತ ದೇವರೊಂದಿಗೆ ಅನ್ಯೋನ್ಯತೆಯಲ್ಲಿರುವವನು ಅವರೊಂದಿಗೆ ಒಂದೇ ಆತ್ಮವಾಗಿದ್ದಾನೆ.</verse>
				<verse number="18">ಲೈಂಗಿಕ ಅನೈತಿಕತೆಯಿಂದ ಓಡಿಹೋಗಿರಿ. ಮನುಷ್ಯನು ಮಾಡುವ ಇತರ ಎಲ್ಲಾ ಪಾಪಗಳು ಅವನ ದೇಹದ ಹೊರಗಿರುತ್ತವೆ, ಆದರೆ ಲೈಂಗಿಕ ಅನೈತಿಕತೆಯು, ತನ್ನ ದೇಹಕ್ಕೆ ವಿರುದ್ಧವಾಗಿ ಪಾಪಕ್ಕೆ ನಡೆಸುತ್ತದೆ.</verse>
				<verse number="19">ದೇವರಿಂದ ನಿಮಗೆ ದೊರಕಿ, ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮರ ಆಲಯವು ನಿಮ್ಮ ದೇಹವಾಗಿದೆ ಎಂಬುದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ.</verse>
				<verse number="20">ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನೀವು ನಿಮ್ಮ ದೇಹದಿಂದ ದೇವರನ್ನು ಮಹಿಮೆಪಡಿಸಿರಿ.</verse>
			</chapter>
			<chapter number="7">
				<verse number="1">ನೀವು ಬರೆದ ಸಂಗತಿಗಳನ್ನು ಕುರಿತಾಗಿ ಹೇಳುವುದೇನೆಂದರೆ, “ಸ್ತ್ರೀಸಂಪರ್ಕವಿಲ್ಲದೆ ಇರುವುದು ಮನುಷ್ಯನಿಗೆ ಒಳ್ಳೆಯದು.”</verse>
				<verse number="2">ಆದರೆ ಲೈಂಗಿಕ ಅನೈತಿಕತೆ ಹೆಚ್ಚಾಗಿರುವುದರಿಂದ, ಪ್ರತಿಯೊಬ್ಬನಿಗೆ ಸ್ವಂತ ಹೆಂಡತಿ ಇರಲಿ, ಪ್ರತಿಯೊಬ್ಬಳಿಗೆ ಸ್ವಂತ ಗಂಡನಿರಲಿ.</verse>
				<verse number="3">ಗಂಡನು ಹೆಂಡತಿಗೆ, ಹೆಂಡತಿಯು ಗಂಡನಿಗೆ ದಾಂಪತ್ಯ ಧರ್ಮ ಪೂರೈಸಲಿ.</verse>
				<verse number="4">ಹೆಂಡತಿಯ ಸ್ವಂತ ದೇಹದ ಮೇಲೆ ಆಕೆಗೆ ಅಧಿಕಾರವಿಲ್ಲ, ಅದು ಗಂಡನಿಗಿದೆ. ಹಾಗೆಯೇ, ಗಂಡನ ಸ್ವಂತ ದೇಹದ ಮೇಲೆ ಅವನಿಗೆ ಅಧಿಕಾರವಿಲ್ಲ, ಅದು ಅವನ ಹೆಂಡತಿಗಿದೆ.</verse>
				<verse number="5">ಗಂಡ ಹೆಂಡತಿ ಪರಸ್ಪರ ಸಮ್ಮತಿಯಿಂದ ಸ್ವಲ್ಪಕಾಲ ಪ್ರಾರ್ಥನೆಗಾಗಿ ಅಗಲಿರಬಹುದಷ್ಟೇ. ಇಲ್ಲದಿದ್ದರೆ, ಸೈತಾನನು ನಿಮ್ಮ ಸಂಯಮ ಇಲ್ಲದಿರುವುದನ್ನು ನೋಡಿ ನಿಮ್ಮನ್ನು ಶೋಧಿಸದಂತೆ ಒಂದುಗೂಡಬೇಕು.</verse>
				<verse number="6">ಹೀಗೆ ನಾನು ಹೇಳುವುದು ಸಲಹೆಯೇ ಹೊರತು ಆಜ್ಞೆಯಲ್ಲ.</verse>
				<verse number="7">ನಾನಿರುವಂತೆಯೇ ಎಲ್ಲಾ ಮನುಷ್ಯರು ಇರಬೇಕೆಂಬುದು ನನ್ನ ಇಷ್ಟ. ಆದರೆ ಒಬ್ಬರು ಒಂದು ವಿಧವಾಗಿಯೂ ಮತ್ತೊಬ್ಬರು ಇನ್ನೊಂದು ವಿಧವಾಗಿಯೂ ಸ್ವಂತ ವರವನ್ನು ದೇವರಿಂದ ಪಡೆದುಕೊಂಡಿರುತ್ತಾರೆ.</verse>
				<verse number="8">ಮದುವೆಯಾಗದವರಿಗೂ ವಿಧವೆಯರಿಗೂ ನಾನು ಹೇಳುವುದೇನೆಂದರೆ: ನಾನಿರುವಂತೆಯೇ ಮದುವೆಯಾಗದೇ ಇರುವುದು ಅವರಿಗೆ ಒಳ್ಳೆಯದು.</verse>
				<verse number="9">ಅವರಿಗೆ ಸ್ವಯಂನಿಯಂತ್ರಣ ಇಲ್ಲದಿದ್ದರೆ, ಮದುವೆಮಾಡಿಕೊಳ್ಳಲಿ, ಕಾಮದಾಶೆ ಪಡುವುದಕ್ಕಿಂತ ಮದುವೆ ಮಾಡಿಕೊಳ್ಳುವುದು ಉತ್ತಮ.</verse>
				<verse number="10">ಮದುವೆ ಮಾಡಿಕೊಂಡಿರುವವರಿಗೆ ನನ್ನ ಅಪ್ಪಣೆ ಅಲ್ಲ, ನಿಜವಾಗಿ ಕರ್ತದೇವರ ಅಪ್ಪಣೆಯಾಗಿದೆ: ಏನೆಂದರೆ, ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು.</verse>
				<verse number="11">ಒಂದು ವೇಳೆ ಅಗಲಿದರೆ ಆಕೆಯು ಮದುವೆಯಿಲ್ಲದೆ ಇರಬೇಕು. ಇಲ್ಲವೆ ಗಂಡನ ಸಂಗಡ ಸಂಧಾನವಾಗಬೇಕು ಮತ್ತು ಗಂಡನು ಹೆಂಡತಿಯನ್ನು ಬಿಟ್ಟುಬಿಡಬಾರದು.</verse>
				<verse number="12">ಉಳಿದವರಿಗೆ ಕರ್ತ ದೇವರಿಂದ ಮಾತು ಇಲ್ಲವಾದರೂ ನಾನು ಹೇಳುವುದೇನೆಂದರೆ: ಒಬ್ಬ ಸಹೋದರನಿಗೆ ಕ್ರೈಸ್ತ ವಿಶ್ವಾಸಿಯಲ್ಲದ ಹೆಂಡತಿಯಿರಲಾಗಿ, ಆಕೆ ಅವನೊಂದಿಗೆ ಬಾಳುವುದಕ್ಕೆ ಸಮ್ಮತಿಸಿದರೆ, ಅವನು ಆಕೆಯನ್ನು ಬಿಡದಿರಲಿ.</verse>
				<verse number="13">ಒಬ್ಬ ಸ್ತ್ರೀಗೆ ಅವಿಶ್ವಾಸಿಯಾದ ಗಂಡನಿರಲಾಗಿ ಅವನು ಆಕೆಯೊಂದಿಗೆ ಬಾಳುವುದಕ್ಕೆ ಸಮ್ಮತಿಸಿದರೆ, ಆಕೆಯು ಅವನನ್ನು ಬಿಡದಿರಲಿ.</verse>
				<verse number="14">ಏಕೆಂದರೆ, ಅವಿಶ್ವಾಸಿಯಾದ ಗಂಡನು ವಿಶ್ವಾಸಿಯಾದ ತನ್ನ ಹೆಂಡತಿಯಿಂದ ಮತ್ತು ಅವಿಶ್ವಾಸಿಯಾದ ಹೆಂಡತಿಯು ವಿಶ್ವಾಸಿಯಾದ ತನ್ನ ಗಂಡನಿಂದ ದೇವಜನರೊಂದಿಗೆ ಸಂಬಂಧವುಳ್ಳವರಾಗಿದ್ದಾರೆ. ಹಾಗಲ್ಲದಿದ್ದರೆ, ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ದೇವರಿಗಾಗಿ ಪವಿತ್ರರಾಗಿದ್ದಾರೆ.</verse>
				<verse number="15">ಆದರೆ ಅವಿಶ್ವಾಸಿಯಾದವರು ಅಗಲಬೇಕೆಂದಿದ್ದರೆ ಅಗಲಿ ಹೋಗಲಿ. ಇಂಥಾ ವಿಷಯಗಳಲ್ಲಿ ವಿಶ್ವಾಸಿಯಾದ ಸಹೋದರನಾಗಲೀ, ಸಹೋದರಿಯಾಗಲೀ ಬದ್ಧರಲ್ಲ. ಸಮಾಧಾನದಲ್ಲಿ ಬಾಳುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾರೆ.</verse>
				<verse number="16">ಸ್ತ್ರೀಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಪುರುಷನೇ, ನಿನ್ನ ಹೆಂಡತಿಯನ್ನು ರಕ್ಷಿಸುವೆಯೋ ಏನೋ ನಿನಗೇನು ಗೊತ್ತು?</verse>
				<verse number="17">ಆದರೂ ಕರ್ತದೇವರು ಪ್ರತಿಯೊಬ್ಬನಿಗೆ ನೇಮಿಸಿದಂತೆಯೂ ದೇವರು ಪ್ರತಿಯೊಬ್ಬನನ್ನು ಕರೆದಂತೆಯೂ ನಡೆದುಕೊಳ್ಳಲಿ. ಎಲ್ಲಾ ಸಭೆಗಳಲ್ಲಿಯೂ ಇರಬೇಕೆಂದು ನಾನು ಕೊಡುವ ನಿಯಮವು ಇದೇ.</verse>
				<verse number="18">ಸುನ್ನತಿ ಮಾಡಿಸಿಕೊಂಡವನು ದೇವರ ಕರೆಹೊಂದಿದ್ದರೆ, ಅವನು ಸುನ್ನತಿಯಿಲ್ಲದವನಂತೆ ಇರಬಾರದು. ಸುನ್ನತಿ ಮಾಡಿಸಿಕೊಳ್ಳದವನು ದೇವರ ಕರೆಹೊಂದಿದ್ದರೆ, ಅವನು ಸುನ್ನತಿ ಮಾಡಿಸಿಕೊಳ್ಳಬೇಕಾಗಿಲ್ಲ.</verse>
				<verse number="19">ಸುನ್ನತಿಯಿದ್ದರೂ ಪ್ರಯೋಜನವಿಲ್ಲ, ಸುನ್ನತಿಯಿಲ್ಲದಿದ್ದರೂ ಪ್ರಯೋಜನವಿಲ್ಲ. ದೇವರ ಆಜ್ಞೆಗಳನ್ನು ಕೈಗೊಳ್ಳುವುದೇ ಪ್ರಯೋಜನಕರ.</verse>
				<verse number="20">ಪ್ರತಿಯೊಬ್ಬನು ದೇವರು ಕರೆದಾಗ, ಯಾವ ಸ್ಥಿತಿಯಲ್ಲಿದ್ದನೋ ಆ ಸ್ಥಿತಿಯಲ್ಲಿಯೇ ಇರಲಿ.</verse>
				<verse number="21">ದೇವರು ಕರೆದಾಗ ನೀನು ಮತ್ತೊಬ್ಬನ ದಾಸನಾಗಿದ್ದೀಯೋ? ಅದಕ್ಕೆ ಚಿಂತೆ ಮಾಡಬೇಡ. ಆದರೆ ಬಿಡುಗಡೆಯಾಗುವುದಕ್ಕೆ ನೀನು ಶಕ್ತನಾದರೆ ಅದನ್ನೇ ಮಾಡು.</verse>
				<verse number="22">ದೇವರು ಕರೆದಾಗ ಒಬ್ಬನು ದಾಸನಾಗಿದ್ದರೂ, ಅವನು ಕರ್ತ ದೇವರಲ್ಲಿ ಸ್ವತಂತ್ರನು. ಅದೇ ಪ್ರಕಾರ, ಒಬ್ಬನು ಸ್ವತಂತ್ರನಾಗಿದ್ದಾಗ ಕರ್ತದೇವರ ಕರೆಹೊಂದಿದ್ದರೆ, ಅವನು ಕ್ರಿಸ್ತನಿಗೆ ದಾಸನು.</verse>
				<verse number="23">ನಿಮ್ಮನ್ನು ಕ್ರಯಕ್ಕೆ ಕೊಳ್ಳಲಾಗಿದೆ. ಆದ್ದರಿಂದ ಮನುಷ್ಯರಿಗೆ ಗುಲಾಮರಾಗಬೇಡಿರಿ.</verse>
				<verse number="24">ಪ್ರಿಯರೇ, ದೇವರು ಕರೆದಾಗ ಒಬ್ಬನು ಯಾವ ಸ್ಥಿತಿಯಲ್ಲಿ ಇದ್ದನೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ನೆಲೆಸಿರಲಿ.</verse>
				<verse number="25">ಕನ್ಯೆಯರನ್ನು ಕುರಿತು ಕರ್ತ ಯೇಸುವಿನಿಂದ ನನಗೆ ಯಾವ ಆಜ್ಞೆಯೂ ಇಲ್ಲ. ಆದರೂ ಕರ್ತ ಯೇಸುವಿನಿಂದ ಕರುಣೆಯನ್ನು ಪಡೆದು ನಂಬಿಗಸ್ತನಾಗಿರುವ ನಾನು ನನ್ನ ಅಭಿಪ್ರಾಯವನ್ನು ಕೊಡುತ್ತೇನೆ.</verse>
				<verse number="26">ಇಂದಿನ ಕಷ್ಟಕಾಲದ ಪರಿಸ್ಥಿತಿಯಲ್ಲಿ ನೀವು ಇದ್ದ ಹಾಗೇ ಇರುವುದು ನಿಮಗೆ ಒಳ್ಳೆಯದೆಂದು ನಾನು ಭಾವಿಸುತ್ತೇನೆ.</verse>
				<verse number="27">ನಿನಗೆ ಹೆಂಡತಿಯಿದ್ದರೆ? ವಿಚ್ಛೇದನಕ್ಕೆ ಯತ್ನಿಸಬೇಡ. ನೀನು ಹೆಂಡತಿಯಿಂದ ಬಿಡುಗಡೆಯಾಗಿದ್ದರೆ? ಹೆಂಡತಿಗಾಗಿ ಹುಡುಕಬೇಡ.</verse>
				<verse number="28">ಒಂದು ವೇಳೆ ನೀನು ಮದುವೆ ಮಾಡಿಕೊಂಡರೆ, ಅದು ಪಾಪವಲ್ಲ. ಕನ್ಯೆಯು ಮದುವೆ ಮಾಡಿಕೊಂಡರೆ, ಅದು ಸಹ ಪಾಪವಲ್ಲ. ಆದರೆ ಮದುವೆ ಮಾಡಿಕೊಳ್ಳುವವರು ಈ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸುವರು. ನಾನು ನಿಮ್ಮನ್ನು ಇದರಿಂದ ತಪ್ಪಿಸಬೇಕೆಂದು ಅಪೇಕ್ಷಿಸುತ್ತೇನೆ.</verse>
				<verse number="29">ಪ್ರಿಯರೇ, ಸಮಯವು ಕೊಂಚವಾಗಿರುವುದರಿಂದ ಇನ್ನು ಮೇಲೆ, ಮದುವೆಯಾದವರು ಮದುವೆಯಾಗದವರಂತೆಯೂ</verse>
				<verse number="30">ದುಃಖಪಡುವವರು ದುಃಖಪಡದವರಂತೆಯೂ ಆನಂದ ಪಡುವವರು ಆನಂದಪಡದವರಂತೆಯೂ ವಸ್ತುಗಳ್ನು ಕೊಂಡುಕೊಳ್ಳುವವರು ತಾವು ಕೊಂಡುಕೊಂಡದ್ದು ತಮ್ಮದಲ್ಲ ಎಂಬಂತೆಯೂ</verse>
				<verse number="31">ಲೋಕದ ವಸ್ತುಗಳನ್ನು ಉಪಯೋಗಿಸುವವರು ಅದರಲ್ಲಿಯೇ ಮಗ್ನರಾಗದಿರಲಿ. ಏಕೆಂದರೆ ಈಗಿರುವ ಪ್ರಪಂಚ ಗತಿಸಿಹೋಗುತ್ತಿದೆ.</verse>
				<verse number="32">ನೀವು ಚಿಂತೆ ಇಲ್ಲದೆ ಇರಬೇಕೆಂಬುದು ನನ್ನ ಇಷ್ಟ. ಮದುವೆ ಆಗದವನು ಕರ್ತ ಯೇಸುವನ್ನು ಹೇಗೆ ಮೆಚ್ಚಿಸಬೇಕೆಂದು ಕರ್ತ ಯೇಸುವಿನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾನೆ.</verse>
				<verse number="33">ಮದುವೆಯಾದವನು ತನ್ನ ಹೆಂಡತಿಯನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ಕಾರ್ಯಗಳನ್ನು ಕುರಿತು ಮಗ್ನನಾಗಿರುತ್ತಾನೆ.</verse>
				<verse number="34">ಇದರಿಂದ ಅವನ ಆಸಕ್ತಿಗಳಲ್ಲಿ ಭಿನ್ನತೆಯಿರುತ್ತದೆ. ಮದುವೆಯಾಗದ ಮಹಿಳೆ ಅಥವಾ ಕನ್ಯೆ ದೇಹಾತ್ಮಗಳಲ್ಲಿ ಕರ್ತ ಯೇಸುವಿಗೆ ಸಮರ್ಪಿತರಾಗಿರುವ ಉದ್ದೇಶ ಹೊಂದಿದವರಾಗಿ, ಕರ್ತ ಯೇಸುವಿನ ಕಾರ್ಯಗಳಲ್ಲಿ ಆಸಕ್ತಳಾಗಿರುತ್ತಾರೆ. ಆದರೆ ಮದುವೆಯಾದವಳು, ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ.</verse>
				<verse number="35">ನಾನು ನಿಮಗೆ ಬಂಧನ ಹಾಕಬೇಕೆಂದು ಇದನ್ನು ಹೇಳದೆ, ಗಮನ ಸೆಳೆಯದ ಭಕ್ತಿಯಿಂದ ಕರ್ತ ಯೇಸುವಿನ ಸೇವೆಯನ್ನು ಮಾಡುವವರಾಗಿ ನೀವು ಜೀವಿಸಬೇಕೆಂದು ನಿಮ್ಮ ಒಳ್ಳೆಯದಕ್ಕಾಗಿಯೇ ಹೇಳುತ್ತಿದ್ದೇನೆ.</verse>
				<verse number="36">ಒಬ್ಬನು ತನ್ನ ಮಗಳಿಗೆ ಮದುವೆಯಿಲ್ಲದಿರುವುದು ಮರ್ಯಾದೆಯಿಲ್ಲವೆಂದು ಭಾವಿಸಿದರೆ, ಆಕೆಗೆ ಪ್ರಾಯ ಕಳೆದು ಹೋಗುತ್ತಿದ್ದರೆ, ಮದುವೆಯಾಗುವುದು ಅವಶ್ಯವೆಂದು ಅವನಿಗೆ ಕಂಡರೆ, ತನ್ನಿಷ್ಟದಂತೆ ಮಾಡಲಿ. ಇದರಿಂದ ಅವನು ಪಾಪಮಾಡುವುದಿಲ್ಲ, ಮದುವೆ ಮಾಡಿಕೊಡಲಿ.</verse>
				<verse number="37">ಆದರೆ ಒಬ್ಬನು ದೃಢಚಿತ್ತನಾಗಿದ್ದು ಬಲವಂತವೇನೂ ಇಲ್ಲದೆ, ತನ್ನಿಷ್ಟವನ್ನು ನಡೆಸುವುದಕ್ಕೆ ಹಕ್ಕುಳ್ಳವನಾಗಿ ತನ್ನ ಮಗಳನ್ನು ಮದುವೆ ಮಾಡಿಕೊಡುವುದಿಲ್ಲವೆಂದು ತನ್ನೊಳಗೆ ನಿರ್ಣಯಿಸಿಕೊಂಡರೆ, ಅವನು ಹಾಗೆ ಮಾಡುವುದು ಒಳ್ಳೆಯದು.</verse>
				<verse number="38">ಹಾಗಾದರೆ, ತನ್ನ ಮಗಳನ್ನು ಮದುವೆ ಮಾಡಿಕೊಡುವವನು ಒಳ್ಳೆಯದನ್ನು ಮಾಡುತ್ತಾನೆ. ಮದುವೆ ಮಾಡಿಕೊಡದೆ ಇರುವವನು ಉತ್ತಮವಾದುದನ್ನು ಮಾಡುತ್ತಾನೆ.</verse>
				<verse number="39">ಹೆಂಡತಿಯು ತನ್ನ ಗಂಡನು ಜೀವದಿಂದಿರುವ ತನಕ ಅವನಿಗೆ ಬದ್ಧಳಾಗಿದ್ದಾಳೆ. ಗಂಡನು ಸತ್ತಿದ್ದರೆ, ಆಕೆಯು ತನಗೆ ಬೇಕಾದವನನ್ನು ಮದುವೆ ಮಾಡಿಕೊಳ್ಳುವುದಕ್ಕೆ ಸ್ವತಂತ್ರಳಾಗಿದ್ದಾಳೆ. ಆದರೆ ಆ ವ್ಯಕ್ತಿಯು ಕರ್ತ ದೇವರಲ್ಲಿ ವಿಶ್ವಾಸಿಯಾಗಿರಬೇಕು.</verse>
				<verse number="40">ಆಕೆ ಮದುವೆ ಮಾಡಿಕೊಳ್ಳದೆ ಇರುವುದು ಬಹಳ ಸಂತೋಷಕರವಾದದ್ದೆಂದು ನನ್ನ ಅಭಿಪ್ರಾಯ. ನನಗೂ ದೇವರಾತ್ಮ ಇರುವುದಾಗಿ ಭಾವಿಸುತ್ತೇನೆ.</verse>
			</chapter>
			<chapter number="8">
				<verse number="1">ಈಗ ವಿಗ್ರಹಕ್ಕೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳ ವಿಷಯ: “ನಮ್ಮೆಲ್ಲರಿಗೂ ತಿಳುವಳಿಕೆಯಿದೆ,” ಎಂದು ಬಲ್ಲೆವು. ತಿಳುವಳಿಕೆಯು ಅಹಂಕಾರಿಗಳನ್ನಾಗಿ ಮಾಡುತ್ತದೆ. ಆದರೆ ಪ್ರೀತಿಯು ಭಕ್ತಿವೃದ್ಧಿಯನ್ನುಂಟುಮಾಡುತ್ತದೆ.</verse>
				<verse number="2">ಯಾರಾದರೂ ತಾನು ಏನನ್ನಾದರೂ ತಿಳಿದಿರುವುದಾಗಿ ಭಾವಿಸಿದರೆ, ಅಂಥವನು ತಿಳಿಯಬೇಕಾದ ರೀತಿಯಲ್ಲಿ ಇನ್ನೂ ತಿಳಿದುಕೊಂಡಿರುವುದಿಲ್ಲ.</verse>
				<verse number="3">ಆದರೆ ದೇವರನ್ನು ಪ್ರೀತಿಸುವವರನ್ನು ದೇವರು ತಿಳಿದುಕೊಂಡಿರುತ್ತಾರೆ.</verse>
				<verse number="4">ಹಾಗಾದರೆ, ವಿಗ್ರಹಗಳಿಗೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳನ್ನು ತಿನ್ನುವುದರ ವಿಷಯ: “ಲೋಕದಲ್ಲಿ ವಿಗ್ರಹವು ಏನೂ ಅಲ್ಲ. ಒಬ್ಬ ದೇವರೇ ಹೊರತು ಬೇರೆ ದೇವರಿಲ್ಲ,” ಎಂದು ನಮಗೆ ಗೊತ್ತಿದೆ.</verse>
				<verse number="5">ಆಕಾಶದಲ್ಲಾಗಲಿ, ಭೂಮಿಯ ಮೇಲೆ ಆಗಲಿ, ದೇವರುಗಳು ಎಂದು ಎನ್ನಿಸಿಕೊಳ್ಳುವವರು ಉಂಟು. ಅನೇಕರಿಗೆ ಅಂಥ “ದೇವರುಗಳು” ಹಾಗೂ “ಸ್ವಾಮಿಗಳು” ಇದ್ದಾರೆ.</verse>
				<verse number="6">ನಮಗಾದರೋ ತಂದೆ ದೇವರು ಒಬ್ಬರೇ ಇರುತ್ತಾರೆ. ಅವರಿಂದಲೇ ಸಮಸ್ತವೂ ಉಂಟಾಯಿತು. ಅವರಿಗಾಗಿಯೇ ನಾವು ಜೀವಿಸುತ್ತೇವೆ. ನಮಗಿರುವ ಕರ್ತದೇವರು ಒಬ್ಬರೇ. ಅವರೇ ಕ್ರಿಸ್ತ ಯೇಸು. ಅವರಿಂದಲೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ.</verse>
				<verse number="7">ಆದರೆ ಈ ತಿಳುವಳಿಕೆಯು ಎಲ್ಲರಲ್ಲಿಯೂ ಇಲ್ಲ. ಕೆಲವರು ಇದುವರೆಗೂ ವಿಗ್ರಹಕ್ಕೆ ಅರ್ಪಿತವಾದದ್ದನ್ನು ತಿನ್ನುವ ರೂಢಿಯಲ್ಲಿದ್ದು, ಅವರು ವಿಗ್ರಹಕ್ಕೆ ನೈವೇದ್ಯ ಮಾಡಿ ತಿನ್ನುವುದಾಗಿ ಭಾವಿಸಿಕೊಳ್ಳುತ್ತಾರೆ. ಹೀಗೆ ಅವರ ಮನಸ್ಸಾಕ್ಷಿ ಬಲಹೀನವಾಗಿರುವುದರಿಂದ, ಅದು ಅಶುದ್ಧವಾಗಿರುತ್ತದೆ.</verse>
				<verse number="8">ಆದರೆ ಆಹಾರವು ನಮ್ಮನ್ನು ದೇವರ ಸಮೀಪಕ್ಕೆ ಸೇರಿಸಲಾರದು. ಅದನ್ನು ತಿನ್ನದಿದ್ದರೆ ನಮಗೆ ನಷ್ಟವಿಲ್ಲ, ತಿಂದರೆ ನಮಗೆ ಲಾಭವಿಲ್ಲ.</verse>
				<verse number="9">ಆದರೆ ಈ ನಿಮ್ಮ ಸ್ವಾತಂತ್ರ್ಯವು ಬಲಹೀನರಿಗೆ ವಿಘ್ನವಾಗದಂತೆ ಜಾಗರೂಕರಾಗಿರಿ.</verse>
				<verse number="10">ಎಲ್ಲಾ ತಿಳುವಳಿಕೆಯಿರುವ ನೀನು ವಿಗ್ರಹದ ಗುಡಿಯಲ್ಲಿ ತಿನ್ನುವುದನ್ನು ನೋಡಿದರೆ ಬಲಹೀನ ಮನಸ್ಸಾಕ್ಷಿಯುಳ್ಳ ಸಹೋದರನು, ತಾನೂ ವಿಗ್ರಹಕ್ಕೆ ನೈವೇದ್ಯ ಮಾಡಿದ್ದನ್ನು ತಿನ್ನುವುದಕ್ಕೆ ಧೈರ್ಯಗೊಳ್ಳುವನಲ್ಲವೇ?</verse>
				<verse number="11">ಆ ಬಲಹೀನನು ನಿನ್ನ ತಿಳುವಳಿಕೆಯಿಂದ ನಾಶವಾಗುತ್ತಾನೆ. ಆ ಸಹೋದರನಿಗಾಗಿಯೂ ಕ್ರಿಸ್ತ ಯೇಸುವು ತಮ್ಮ ಪ್ರಾಣವನ್ನು ಕೊಟ್ಟರಲ್ಲವೇ?</verse>
				<verse number="12">ಹೀಗೆ ನಿನ್ನ ಸಹೋದರರ ವಿರುದ್ಧ ಪಾಪಮಾಡಿ, ಬಲಹೀನವಾದ ಅವರ ಮನಸ್ಸನ್ನು ನೋಯಿಸಿ, ಕ್ರಿಸ್ತ ಯೇಸುವಿಗೆ ವಿರುದ್ಧವಾಗಿ ಪಾಪಮಾಡುವವನಾಗಿರುತ್ತಿ.</verse>
				<verse number="13">ಆದ್ದರಿಂದ ನಾನು ತಿನ್ನುವಂಥದ್ದು ನನ್ನ ಸಹೋದರನನ್ನು ಪಾಪದಲ್ಲಿ ಬೀಳುವಂತೆ ಮಾಡುವುದಾದರೆ, ಎಂದಿಗೂ ನಾನು ಮಾಂಸವನ್ನು ತಿನ್ನುವುದೇ ಇಲ್ಲ. ಅವನ ಬೀಳುವಿಕೆಗೆ ಕಾರಣವಾಗುವುದೂ ಇಲ್ಲ.</verse>
			</chapter>
			<chapter number="9">
				<verse number="1">ನಾನು ಸ್ವತಂತ್ರನಲ್ಲವೇ? ನಾನೂ ಅಪೊಸ್ತಲನಲ್ಲವೇ? ನಾನು ನಮ್ಮ ಕರ್ತ ಆಗಿರುವ ಯೇಸುವನ್ನು ಕಂಡವನಲ್ಲವೇ? ನಾನು ಕರ್ತ ದೇವರಲ್ಲಿ ಮಾಡಿದ ಕೆಲಸದ ಫಲವು ನೀವಲ್ಲವೇ?</verse>
				<verse number="2">ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗೆ ನಾನು ಅಪೊಸ್ತಲನಾಗಿದ್ದೇನೆ! ನನ್ನ ಅಪೊಸ್ತಲ ಸೇವೆಯ ಮುದ್ರೆಯು ಕರ್ತ ದೇವರಲ್ಲಿ ನೀವೇ ಆಗಿದ್ದೀರಷ್ಟೇ.</verse>
				<verse number="3">ನನ್ನ ಮೇಲೆ ತಪ್ಪು ಹೊರಿಸುವವರಿಗೆ ಇದೇ ನನ್ನ ಪ್ರತಿವಾದ:</verse>
				<verse number="4">ಅನ್ನಪಾನಗಳಿಗಾಗಿ ನಮಗೆ ಹಕ್ಕಿಲ್ಲವೇ?</verse>
				<verse number="5">ಮಿಕ್ಕ ಅಪೊಸ್ತಲರಂತೆಯೂ ಕರ್ತದೇವರ ತಮ್ಮಂದಿರಂತೆಯೂ ಕೇಫನಂತೆಯೂ ವಿಶ್ವಾಸಿಯಾದ ಒಬ್ಬಳನ್ನು ಮದುವೆಮಾಡಿಕೊಳ್ಳಲು ನಮಗೆ ಹಕ್ಕಿಲ್ಲವೇ?</verse>
				<verse number="6">ಇಲ್ಲವೆ ಉಪಜೀವನಕ್ಕಾಗಿ ನಾನೂ ಮತ್ತು ಬಾರ್ನಬನೂ ಮಾತ್ರವೇ ಕೆಲಸಮಾಡಬೇಕೋ?</verse>
				<verse number="7">ಸೈನಿಕ ಸೇವೆಯನ್ನು ಯಾವನಾದರೂ ಸ್ವಂತ ಖರ್ಚಿನಿಂದ ಮಾಡುವುದುಂಟೋ? ದ್ರಾಕ್ಷಿಯ ತೋಟವನ್ನು ಮಾಡಿ ಅದರ ಫಲವನ್ನು ತಿನ್ನದೇ ಇರುವವರುಂಟೋ? ಮಂದೆಯನ್ನು ಮೇಯಿಸುವವನು ಹಾಲನ್ನು ಕುಡಿಯದೇ ಇರುವುದುಂಟೋ?</verse>
				<verse number="8">ನಾನು ಕೇವಲ ಮಾನವೀಯ ನೋಟದಲ್ಲಿ ಮಾತನಾಡುತ್ತಿದ್ದೇನೋ? ನಿಯಮವು ಸಹ ಇದನ್ನು ಹೇಳುವುದಿಲ್ಲವೋ?</verse>
				<verse number="9">“ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು,” ಎಂದು ಮೋಶೆಯ ನಿಯಮದಲ್ಲಿ ಬರೆದಿದೆ. ಇಲ್ಲಿ ದೇವರಿಗೆ ಎತ್ತಿನ ಬಗ್ಗೆ ಮಾತ್ರ ಚಿಂತೆಯಿದೆಯೋ?</verse>
				<verse number="10">ನಿಶ್ಚಯವಾಗಿಯೂ, ದೇವರು ನಮಗೋಸ್ಕರ ಇವೆಲ್ಲವನ್ನು ಹೇಳುತ್ತಾರೆ ಅಲ್ಲವೇ? ಹೌದು, ಪವಿತ್ರ ವೇದವು ನಮಗೋಸ್ಕರವಾಗಿಯೇ ಬರೆಯಲಾಗಿದೆ. ಉಳುವವನು ಉಳುವಾಗ, ಒಕ್ಕುವವನು ಒಕ್ಕುವಾಗ ಸುಗ್ಗಿಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿಂದ ಹಾಗೆ ಮಾಡಬೇಕು.</verse>
				<verse number="11">ನಾವು ನಿಮ್ಮಲ್ಲಿ ಆತ್ಮಿಕ ಸಂಗತಿಗಳನ್ನು ಬಿತ್ತಿದ ಮೇಲೆ, ನಿಮ್ಮಿಂದ ಭೌತಿಕ ಸುಗ್ಗಿಯನ್ನು ಕೊಯ್ಯುವುದು ದೊಡ್ಡದೋ?</verse>
				<verse number="12">ಇತರರಿಗೆ ನಿಮ್ಮ ಸಹಾಯದಲ್ಲಿ ಪಾಲು ಇದ್ದರೆ, ಅದರಲ್ಲಿ ನಮಗೂ ಹೆಚ್ಚು ಪಾಲು ಇರಬೇಕಲ್ಲಾ? ಆದರೆ ನಾವು ಈ ಅಧಿಕಾರವನ್ನು ಚಲಾಯಿಸಿಲ್ಲ. ಕ್ರಿಸ್ತ ಯೇಸುವಿಗೆ ಸೇರಿದ ಸುವಾರ್ತೆಗೆ ಅಡ್ಡಿಯಾಗಬಾರದೆಂದು ಎಲ್ಲವನ್ನೂ ಸಹಿಸಿಕೊಂಡೆವು.</verse>
				<verse number="13">ದೇವಾಲಯದಲ್ಲಿ ಸೇವೆಮಾಡುವವರು, ದೇವಾಲಯದಲ್ಲಿ ಊಟ ಪಡೆಯುತ್ತಾರೆಂಬುದೂ; ಬಲಿಪೀಠದ ಬಳಿಯಲ್ಲಿ ಸೇವೆಮಾಡುವವರು, ಆ ಬಲಿಪೀಠದ ಮೇಲೆ ಸಮರ್ಪಿಸಿದ್ದರಲ್ಲಿ ಪಾಲು ಹೊಂದುತ್ತಾರೆಂಬುದೂ ನಿಮಗೆ ತಿಳಿಯದೋ?</verse>
				<verse number="14">ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು, ಸುವಾರ್ತೆಯಿಂದಲೇ ಜೀವನ ಮಾಡಬೇಕೆಂದು ಕರ್ತದೇವರು ಸಹ ಆಜ್ಞಾಪಿಸಿದ್ದಾರೆ.</verse>
				<verse number="15">ಆದರೆ ನಾನಂತೂ ಇವುಗಳಲ್ಲಿ ಒಂದು ಹಕ್ಕನ್ನೂ ಉಪಯೋಗಿಸಿಕೊಂಡಿಲ್ಲ. ಅಂಥವುಗಳನ್ನು ನನಗೆ ನೀವು ಮಾಡಬೇಕೆಂಬ ಅಪೇಕ್ಷೆಯಿಂದ ಈ ಸಂಗತಿಗಳನ್ನು ನಾನು ಬರೆಯಲಿಲ್ಲ. ಯಾರಾದರೂ ಈ ಹೆಮ್ಮೆಯನ್ನು ನನ್ನಿಂದ ಅಪಹರಿಸುವುದಕ್ಕಿಂತಲೂ ಸಾಯುವುದೇ ಲೇಸು.</verse>
				<verse number="16">ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಸಿಕೊಳ್ಳುವ ಯಾವ ಆಸೆಯೂ ನನಗೆ ಇಲ್ಲ. ಸಾರಲೇಬೇಕೆಂಬ ಕರ್ತವ್ಯಕ್ಕೆ ನಾನು ಸಾಲಗಾರನಾಗಿದ್ದೇನೆ. ಸುವಾರ್ತೆಯನ್ನು ಸಾರದಿದ್ದರೆ, ನನ್ನ ಗತಿ ಏನೆಂದು ಹೇಳಲಿ!</verse>
				<verse number="17">ನಾನು ಇಷ್ಟಪೂರ್ವಕವಾಗಿ ಸುವಾರ್ತೆ ಸಾರಿದರೆ, ನನಗೆ ಬಹುಮಾನವಿರುವುದು. ಇಷ್ಟವಿಲ್ಲದೆ ಮಾಡಿದರೆ, ನನ್ನ ವಶಕ್ಕೆ ಒಪ್ಪಿಸಲಾದ ಕಾರ್ಯಭಾರವನ್ನು ನಾನು ನೆರವೇರಿಸಿದಂತಾಗುತ್ತದೆ.</verse>
				<verse number="18">ಹಾಗಾದರೆ ನನಗೆ ದೊರೆಯುವ ಬಹುಮಾನವೇನು? ನಾನು ಸುವಾರ್ತೆಯನ್ನು ಸಾರುವಾಗ, ಅದನ್ನು ಉಚಿತವಾಗಿ ಸಾರುತ್ತಾ, ಸುವಾರ್ತೆಯ ಪ್ರಸಂಗಿಯಾಗಿ ನನ್ನ ಪೂರ್ಣ ಹಕ್ಕನ್ನು ಉಪಯೋಗಿಸದಿರುವುದೇ ನನ್ನ ಬಹುಮಾನ.</verse>
				<verse number="19">ನಾನು ಸ್ವತಂತ್ರನಾಗಿದ್ದರೂ, ಯಾರಿಗೂ ಸೇರಿದವನಾಗಿರದಿದ್ದರೂ, ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂಬ ಉದ್ದೇಶದಿಂದ ನನ್ನನ್ನು ಎಲ್ಲರಿಗೂ ಗುಲಾಮನನ್ನಾಗಿ ಮಾಡಿಕೊಂಡೆನು.</verse>
				<verse number="20">ಯೆಹೂದ್ಯರನ್ನು ಸಂಪಾದಿಸಿಕೊಳ್ಳುವಂತೆ ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ನಿಯಮಕ್ಕೆ ಅಧೀನನಲ್ಲದಿದ್ದರೂ ನಿಯಮಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವಂತೆ ಅವರಿಗಾಗಿ ನಿಯಮಕ್ಕೆ ಅಧೀನನಂತಾದೆನು.</verse>
				<verse number="21">ನಾನು ನಿಯಮ ಇಲ್ಲದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೆ ನಿಯಮವಿಲ್ಲದವನಂತಾದೆನು. ನಾನು ಕ್ರಿಸ್ತ ಯೇಸುವಿನ ನಿಯಮಕ್ಕೆ ಒಳಗಾದವನಾಗಿದ್ದರೂ ನಾನು ದೇವರ ನಿಯಮದಿಂದ ಸ್ವತಂತ್ರವಾದವನಲ್ಲ.</verse>
				<verse number="22">ಬಲವಿಲ್ಲದವರನ್ನು ಸಂಪಾದಿಸುವುದಕ್ಕಾಗಿ ಬಲವಿಲ್ಲದವರಿಗೆ ಬಲವಿಲ್ಲದವನಾದೆನು. ಯಾವ ವಿಧದಲ್ಲಿಯಾದರೂ ಕೆಲವರನ್ನು ರಕ್ಷಿಸಬೇಕೆಂದು ಎಲ್ಲರಿಗೂ ಎಲ್ಲವೂ ಆದೆನು.</verse>
				<verse number="23">ನಾನು ಸುವಾರ್ತೆಯ ಆಶೀರ್ವಾದಗಳಲ್ಲಿ ಪಾಲುಗಾರನಾಗಬೇಕೆಂದು ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡುತ್ತೇನೆ.</verse>
				<verse number="24">ಪಂದ್ಯಗಳಲ್ಲಿ ಎಲ್ಲರೂ ಓಡುತ್ತಾರೆ. ಆದರೆ ಒಬ್ಬನಿಗೆ ಮಾತ್ರ ಬಹುಮಾನ ದೊರೆಯುತ್ತದೆ ಎಂಬುದು ನಿಮಗೆ ತಿಳಿಯದೋ? ಬಹುಮಾನವನ್ನು ಪಡಕೊಳ್ಳಬೇಕೆಂದು ನೀವೂ ಓಡಿರಿ.</verse>
				<verse number="25">ಆಟಗಳಲ್ಲಿ ಪಂದ್ಯಕ್ಕೆ ಭಾಗವಹಿಸುವವರೆಲ್ಲರೂ, ಕಠಿಣವಾದ ತರಬೇತಿಯನ್ನು ಹೊಂದುತ್ತಾರೆ. ಅವರು ಬಹುದಿನ ಉಳಿಯದೇ ಇರುವ ಕಿರೀಟವನ್ನು ಪಡೆಯುವುದಕ್ಕೆ ಇದನ್ನು ಮಾಡುತ್ತಾರೆ. ಆದರೆ ನಾವು ಎಂದೆಂದಿಗೂ ಉಳಿಯುವ ಕಿರೀಟ ಹೊಂದಲು ಹೋರಾಡುವವರಾಗಿದ್ದೇವೆ.</verse>
				<verse number="26">ಗೊತ್ತುಗುರಿ ಇಲ್ಲದವನ ಹಾಗೆ ನಾನು ಓಡುವುದಿಲ್ಲ, ಗಾಳಿಯನ್ನು ಗುದ್ದುವವನ ಹಾಗೆ ನಾನು ಹೋರಾಡುವುದಿಲ್ಲ.</verse>
				<verse number="27">ನಾನು ಇತರರಿಗೆ ಸುವಾರ್ತೆ ಸಾರಿದ ಮೇಲೆ, ನಾನೇ ಬಹುಮಾನ ಹೊಂದಲು ಅಯೋಗ್ಯನಾಗದಂತೆ ನನ್ನ ದೇಹವನ್ನು ದಂಡಿಸಿ, ನನ್ನ ಸ್ವಾಧೀನದಲ್ಲಿಟ್ಟುಕೊಳ್ಳುತ್ತೇನೆ.</verse>
			</chapter>
			<chapter number="10">
				<verse number="1">ಪ್ರಿಯರೇ, ನಮ್ಮ ಪಿತೃಗಳೆಲ್ಲರೂ ಮೇಘದ ನೆರಳಿನಲ್ಲಿದ್ದರು, ಅವರೆಲ್ಲರೂ ಸಮುದ್ರವನ್ನು ಹಾದುಹೋದರು ಎಂಬ ವಿಷಯದಲ್ಲಿ ನೀವು ಅಜ್ಞಾನಿಗಳಾಗಿರಬಾರದೆಂದು ಅಪೇಕ್ಷಿಸುತ್ತೇನೆ.</verse>
				<verse number="2">ಅವರೆಲ್ಲರೂ ಮೋಶೆಯಲ್ಲಿ ಮೇಘದಲ್ಲಿಯೂ ಸಮುದ್ರದಲ್ಲಿಯೂ ಸ್ನಾನವನ್ನು ಹೊಂದಿದರು.</verse>
				<verse number="3">ಅವರೆಲ್ಲರೂ ಒಂದೇ ಆತ್ಮಿಕವಾದ ಆಹಾರವನ್ನು ಉಂಡರು.</verse>
				<verse number="4">ಅವರೆಲ್ಲರೂ ಒಂದೇ ಆತ್ಮಿಕವಾದ ಪಾನವನ್ನು ಕುಡಿದರು. ಅವರು ತಮ್ಮೊಂದಿಗೆ ಬಂದ ದೈವಿಕವಾದ ಬಂಡೆಯೊಳಗಿಂದ ಬಂದ ನೀರನ್ನು ಕುಡಿದರು. ಕ್ರಿಸ್ತ ಯೇಸುವೇ ಆ ಬಂಡೆ.</verse>
				<verse number="5">ಆದರೆ ಅವರೊಳಗೆ ಬಹುಮಂದಿಯನ್ನು ದೇವರು ಮೆಚ್ಚಲಿಲ್ಲ. ಆದ್ದರಿಂದ ಅವರು ಅರಣ್ಯದಲ್ಲಿ ಸಂಹಾರವಾದರು.</verse>
				<verse number="6">ಅವರು ಕೆಟ್ಟ ವಿಷಯಗಳನ್ನು ಆಶಿಸಿದಂತೆ ನಾವೂ ಆಶಿಸುವವರಾಗಬಾರದೆಂಬುದಕ್ಕಾಗಿ ಈ ಸಂಗತಿಗಳು ಈಗ ನಮಗೆ ನಿದರ್ಶನಗಳಾಗಿವೆ.</verse>
				<verse number="7">“ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿ ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು, ಕುಣಿದಾಡುವುದಕ್ಕೆ ಎದ್ದರು,” ಎಂದು ಬರೆದಿರುವಂತೆ ನೀವೂ ವಿಗ್ರಹಾರಾಧಕರಾಗಬೇಡಿರಿ.</verse>
				<verse number="8">ಅವರಲ್ಲಿ ಕೆಲವರು ಜಾರತ್ವ ಮಾಡಿ, ಒಂದೇ ದಿನದಲ್ಲಿ ಇಪ್ಪತ್ಮೂರು ಸಾವಿರ ಮಂದಿ ಸತ್ತರು. ನಾವು ಜಾರತ್ವ ಮಾಡದೆ ಇರೋಣ.</verse>
				<verse number="9">ಅವರಲ್ಲಿ ಕೆಲವರು ಕರ್ತದೇವರನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದಂತೆ, ನಾವೂ ಪರೀಕ್ಷಿಸದೆ ಇರೋಣ.</verse>
				<verse number="10">ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕನ ಕೈಯಿಂದ ಸಂಹಾರವಾದಂತೆ ನೀವೂ ಗೊಣಗುಟ್ಟಬೇಡಿರಿ.</verse>
				<verse number="11">ಆ ಮನುಷ್ಯರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನಗಳಾಗಿವೆ, ಯುಗಾಂತ್ಯಕ್ಕೆ ಬಂದಿರುವ ನಮಗೆ ಎಚ್ಚರಿಕೆಯ ಮಾತುಗಳಾಗಿವೆ.</verse>
				<verse number="12">ಆದಕಾರಣ ದೃಢವಾಗಿ ನಿಂತಿದ್ದೇವೆಂದು ಭಾವಿಸುವ ನೀವು ಬೀಳದಿರುವಂತೆ ನೋಡಿಕೊಳ್ಳಿರಿ.</verse>
				<verse number="13">ಮನುಷ್ಯರಿಗಾಗುವ ಶೋಧನೆಯೇ ಹೊರತು, ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲ. ಆದರೆ ದೇವರು ನಂಬಿಗಸ್ತರು. ನಿಮ್ಮ ಶಕ್ತಿಗೆ ಮೀರಿದ ಶೋಧನೆಗಳನ್ನು ಅವರು ನಿಮ್ಮ ಮೇಲೆ ಬರುವಂತೆ ಮಾಡುವುದಿಲ್ಲ. ಆದರೆ ನಿಮಗೆ ಶೋಧನೆಗಳು ಬಂದಾಗ, ಅವುಗಳನ್ನು ಜಯಿಸುವುದಕ್ಕೆ ಶಕ್ತರಾಗುವಂತೆ, ಅವುಗಳಿಂದ ತಪ್ಪಿಸಿಕೊಳ್ಳುವ ಮಾರ್ಗವನ್ನು ಮಾಡುವರು.</verse>
				<verse number="14">ಆದ್ದರಿಂದ ನನ್ನ ಪ್ರಿಯ ಸ್ನೇಹಿತರೇ, ವಿಗ್ರಹಾರಾಧನೆಯನ್ನು ಬಿಟ್ಟು ಓಡಿಹೋಗಿರಿ.</verse>
				<verse number="15">ವಿವೇಕಿಗಳಿಗೆ ಹೇಳಿದಂತೆ, ನಾನು ಹೇಳುವುದನ್ನು ನೀವು ವಿವೇಚಿಸಿರಿ.</verse>
				<verse number="16">ನಾವು ಸ್ತೋತ್ರಮಾಡಿ ಕುಡಿಯುವ ಸ್ತೋತ್ರದ ಪಾತ್ರೆಯು ಕ್ರಿಸ್ತ ಯೇಸುವಿನ ರಕ್ತದ ಅನ್ಯೋನ್ಯತೆಯಲ್ಲವೇ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದಲ್ಲಿಯ ಅನ್ಯೋನ್ಯತೆಯಲ್ಲವೇ?</verse>
				<verse number="17">ರೊಟ್ಟಿ ಒಂದೇ, ಆದ್ದರಿಂದ ನಾವು ಅನೇಕರಿದ್ದರೂ, ಒಂದೇ ದೇಹವಾಗುತ್ತೇವೆ. ಏಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಭಾಗಿಗಳಾಗುತ್ತೇವೆ.</verse>
				<verse number="18">ನೀವು ಇಸ್ರಾಯೇಲ್ ಜನರ ಕುರಿತು ಆಲೋಚಿಸಿರಿ: ಯಜ್ಞಾರ್ಪಿತವಾದದ್ದನ್ನು ತಿನ್ನುವವರು ಬಲಿಪೀಠದೊಡನೆ ಭಾಗಿಗಳಾಗಿದ್ದಾರಲ್ಲವೇ?</verse>
				<verse number="19">ಹಾಗಾದರೆ ನಾನು ಹೇಳುವುದೇನು? ವಿಗ್ರಹಕ್ಕೆ ಅರ್ಪಿಸಿದ್ದು ಅಥವಾ ವಿಗ್ರಹಕ್ಕೆ ಏನಾದರೂ ಮಹತ್ವವಿರುತ್ತದೆಯೋ? ನಿಶ್ಚಯವಾಗಿಯೂ ಇಲ್ಲ.</verse>
				<verse number="20">ಆದರೆ ಯೆಹೂದ್ಯರಲ್ಲದವರು ಅರ್ಪಿಸುವ ಯಜ್ಞ ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುವಂತದ್ದಾಗಿದೆ. ನೀವು ದೆವ್ವಗಳೊಂದಿಗೆ ಭಾಗಿಗಳಾಗಿರಬೇಕೆಂಬುದು ನನ್ನ ಇಷ್ಟವಲ್ಲ.</verse>
				<verse number="21">ನೀವು ಕರ್ತದೇವರ ಪಾತ್ರೆಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯಲಾರಿರಿ. ನೀವು ಕರ್ತದೇವರ ಪಂಕ್ತಿಯಲ್ಲಿಯೂ ದೆವ್ವಗಳ ಪಂಕ್ತಿಯಲ್ಲಿಯೂ ಭಾಗಿಗಳಾಗಿರಲಾರಿರಿ.</verse>
				<verse number="22">ನಾವು ಹೀಗೆ ದೇವರನ್ನು ಅಸೂಯೆಗೆಬ್ಬಿಸಬಹುದೇ? ನಾವು ದೇವರಿಗಿಂತಲೂ ಬಲಿಷ್ಠರಾಗಿದ್ದೇವೆಯೋ?</verse>
				<verse number="23">ಎಲ್ಲಾ ಕಾರ್ಯಗಳನ್ನು ಮಾಡಲು ಸ್ವಾತಂತ್ರ್ಯವಿದೆ. ಆದರೆ ಎಲ್ಲಾ ಕಾರ್ಯಗಳೂ ಪ್ರಯೋಜನಕರವಾಗಿರುವುದಿಲ್ಲ. ಎಲ್ಲಾ ಕಾರ್ಯಗಳನ್ನು ಮಾಡಲು ಸ್ವಾತಂತ್ರ್ಯವಿದೆ ಆದರೆ, ಎಲ್ಲಾ ಕಾರ್ಯಗಳೂ ಭಕ್ತಿವೃದ್ಧಿಯನ್ನುಂಟುಮಾಡುವುದಿಲ್ಲ.</verse>
				<verse number="24">ಪ್ರತಿಯೊಬ್ಬನೂ ತನ್ನ ಹಿತವನ್ನು ಮಾತ್ರ ನೋಡಿಕೊಳ್ಳದೆ, ಪರಹಿತವನ್ನೂ ನೋಡಲಿ.</verse>
				<verse number="25">ಮಾಂಸದ ಅಂಗಡಿಯಲ್ಲಿ ಮಾರುವುದು ಏನಿದ್ದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ತಿನ್ನಿರಿ.</verse>
				<verse number="26">ಏಕೆಂದರೆ, “ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತ ದೇವರದಾಗಿದೆ.”</verse>
				<verse number="27">ಅವಿಶ್ವಾಸಿಗಳಲ್ಲಿ ಯಾವನಾದರೂ ನಿಮ್ಮನ್ನು ಊಟಕ್ಕೆ ಕರೆದಾಗ ನೀವು ಹೋಗಬಯಸಿದರೆ, ನಿಮ್ಮ ಮುಂದೆ ಬಡಿಸಿದ ಪ್ರತಿಯೊಂದನ್ನು ಮನಸ್ಸಾಕ್ಷಿ ನಿಮಿತ್ತ ಏನನ್ನೂ ಪ್ರಶ್ನಿಸದೆ ತಿನ್ನಿರಿ.</verse>
				<verse number="28">ಆದರೆ ಯಾರಾದರೂ ನಿಮಗೆ, “ಇದು ನೈವೇದ್ಯ ಮಾಡಿದ್ದು,” ಎಂದು ಹೇಳಿದರೆ, ತಿಳಿಸಿದ ವ್ಯಕ್ತಿಯ ನಿಮಿತ್ತವೂ ಆ ವ್ಯಕ್ತಿಯ ಮನಸ್ಸಾಕ್ಷಿಯ ನಿಮಿತ್ತವೂ ತಿನ್ನಬೇಡಿರಿ.</verse>
				<verse number="29">ನಾನು ನಿಮ್ಮ ಮನಸ್ಸಾಕ್ಷಿಯ ಬಗ್ಗೆ ಅಲ್ಲ, ಇತರರ ಮನಸ್ಸಾಕ್ಷಿಯ ಬಗ್ಗೆ ಸೂಚಿಸುತ್ತಿದ್ದೇನೆ. ಆ ವ್ಯಕ್ತಿಯ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಏಕೆ ಅಡ್ಡಿಯಾಗಬೇಕು?</verse>
				<verse number="30">ನಾನು ಕೃತಜ್ಞತೆ ಸಲ್ಲಿಸಿ ಆ ಊಟವನ್ನು ಮಾಡಿದರೆ, ಹಾಗೆ ದೇವರಿಗೆ ಕೃತಜ್ಞತೆ ಸಲ್ಲಿಸಿ ಮಾಡಿದ ಊಟಕ್ಕಾಗಿ ನನ್ನ ಮೇಲೆ ತಪ್ಪುಹೊರಿಸುವುದೇಕೆ?</verse>
				<verse number="31">ಆದ್ದರಿಂದ ನೀವು ಊಟಮಾಡಿದರೂ ಪಾನೀಯ ಸೇವಿಸಿದರೂ ಯಾವುದನ್ನೇ ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.</verse>
				<verse number="32">ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ, ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.</verse>
				<verse number="33">ನಾನಂತೂ ಎಲ್ಲರನ್ನೂ, ಎಲ್ಲದರಲ್ಲೂ ಮೆಚ್ಚಿಸಲು ಶ್ರಮಿಸುವವನಾಗಿದ್ದೇನೆ. ಏಕೆಂದರೆ, ನಾನು ನನ್ನ ಸ್ವಂತ ಹಿತವನ್ನೇ ಹುಡುಕದೆ, ಅನೇಕರು ರಕ್ಷಣೆ ಹೊಂದಬೇಕೆಂದು ಇತರರ ಹಿತಕ್ಕಾಗಿ ಶ್ರಮಿಸುವವನಾಗಿದ್ದೇನೆ.</verse>
			</chapter>
			<chapter number="11">
				<verse number="1">ನಾನು ಕ್ರಿಸ್ತ ಯೇಸುವನ್ನು ಅನುಸರಿಸುವಂತೆಯೇ, ನೀವೂ ನನ್ನನ್ನು ಅನುಸರಿಸಿರಿ.</verse>
				<verse number="2">ನೀವು ಎಲ್ಲದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು, ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶಗಳನ್ನು ಬಿಗಿಯಾಗಿ ಅನುಸರಿಸುತ್ತಿರೆಂದು ನಿಮ್ಮನ್ನು ಹೊಗಳುತ್ತೇನೆ.</verse>
				<verse number="3">ಪ್ರತಿ ಪುರುಷನಿಗೂ ಕ್ರಿಸ್ತನು ಶಿರಸ್ಸು, ಸ್ತ್ರೀಗೆ ಪುರುಷನು ಶಿರಸ್ಸು ಮತ್ತು ಕ್ರಿಸ್ತನಿಗೆ ದೇವರು ಶಿರಸ್ಸಾಗಿದ್ದಾರೆ, ಎಂಬುದನ್ನು ನೀವು ತಿಳಿಯಬೇಕೆಂಬುದು ನನ್ನ ಅಪೇಕ್ಷೆ.</verse>
				<verse number="4">ತನ್ನ ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆ ಮಾಡುವ ಇಲ್ಲವೆ, ಪ್ರವಾದನೆ ಹೇಳುವ ಪ್ರತಿ ಪುರುಷನೂ ತನ್ನ ತಲೆಯನ್ನು ಅವಮಾನಪಡಿಸುತ್ತಾನೆ.</verse>
				<verse number="5">ಆದರೆ ತಲೆಯ ಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆ ಮಾಡುವ ಇಲ್ಲವೆ ಪ್ರವಾದನೆ ಹೇಳುವ ಪ್ರತಿ ಸ್ತ್ರೀಯು ತನ್ನ ತಲೆಯನ್ನು ಅವಮಾನ ಪಡಿಸುತ್ತಾಳೆ. ಹೀಗೆ ಮಾಡುವ ಸ್ತ್ರೀಯು ತನ್ನ ತಲೆ ಬೋಳಿಸಿಕೊಳ್ಳುವುದಕ್ಕೆ ಸಮಾನವಾಗಿದೆ.</verse>
				<verse number="6">ಸ್ತ್ರೀಯು ಮುಸುಕು ಹಾಕಿಕೊಳ್ಳದೆ ಇದ್ದರೆ, ಆಕೆಯು ಕೂದಲನ್ನು ಕತ್ತರಿಸಿಕೊಳ್ಳಲಿ. ಕೂದಲನ್ನು ಕತ್ತರಿಸಿಕೊಳ್ಳುವುದಾಗಲಿ, ತಲೆ ಬೋಳಿಸಿಕೊಳ್ಳವುದಾಗಲಿ ಸ್ತ್ರೀಗೆ ಅವಮಾನಕರವಾಗಿದ್ದರೆ, ಆಕೆಯು ಮುಸುಕನ್ನು ಹಾಕಿಕೊಳ್ಳಬೇಕು.</verse>
				<verse number="7">ಪುರುಷನು ದೇವರ ಸ್ವರೂಪವೂ ಮಹಿಮೆಯೂ ಆಗಿರುವುದರಿಂದ, ತನ್ನ ತಲೆಗೆ ಮುಸುಕು ಹಾಕಬೇಕಾಗಿಲ್ಲ. ಆದರೆ ಸ್ತ್ರೀಯು ಪುರುಷನ ಮಹಿಮೆಯಾಗಿದ್ದಾಳೆ.</verse>
				<verse number="8">ಏಕೆಂದರೆ, ಪುರುಷನು ಸ್ತ್ರೀಯಿಂದಲ್ಲ, ಆದರೆ ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಳು.</verse>
				<verse number="9">ಪುರುಷನು ಸ್ತ್ರೀಗಾಗಿ ಸೃಷ್ಟಿಯಾಗಲಿಲ್ಲ, ಸ್ತ್ರೀಯು ಪುರುಷನಿಗಾಗಿ ಸೃಷ್ಟಿಯಾದಳು.</verse>
				<verse number="10">ಈ ಕಾರಣದಿಂದಲೂ ದೇವದೂತರ ನಿಮಿತ್ತವಾಗಿಯೂ ಸ್ತ್ರೀಯ ತಲೆಯ ಮೇಲೆ ಅಧಿಕಾರದ ಮುಸುಕನ್ನು ಹಾಕಿರಬೇಕು.</verse>
				<verse number="11">ಆದರೂ, ಕರ್ತ ದೇವರಲ್ಲಿ ಪುರುಷನಿಲ್ಲದೆ ಸ್ತ್ರೀಯು ಇಲ್ಲ; ಸ್ತ್ರೀಯಿಲ್ಲದ ಪುರುಷನೂ ಇಲ್ಲ.</verse>
				<verse number="12">ಏಕೆಂದರೆ ಸ್ತ್ರೀಯು ಪುರುಷನಿಂದ ಉತ್ಪತ್ತಿಯಾದಂತೆ, ಪುರುಷನು ಸ್ತ್ರೀಯಿಂದ ಜನಿಸುತ್ತಾನೆ. ಆದರೆ ಸಮಸ್ತವೂ ದೇವರಿಂದಲೇ ಆಗಿರುತ್ತದೆ.</verse>
				<verse number="13">ಇದನ್ನು ನೀವೇ ತೀರ್ಮಾನ ಮಾಡಿಕೊಳ್ಳಿರಿ: ಸ್ತ್ರೀಯು ಮುಸುಕಿಲ್ಲದೆ ದೇವರಿಗೆ ಪ್ರಾರ್ಥಿಸುವುದು ಯುಕ್ತವೋ?</verse>
				<verse number="14">ಪುರುಷನು ಕೂದಲನ್ನು ಬೆಳೆಸಿಕೊಂಡರೆ, ಅದು ಅವನಿಗೆ ಅವಮಾನಕರವಾಗಿದೆಯೆಂದೂ</verse>
				<verse number="15">ಸ್ತ್ರೀಯು ಕೂದಲು ಬೆಳೆಸಿಕೊಂಡರೆ, ಅದು ಅವಳಿಗೆ ಮಹಿಮೆಯಾಗಿದೆಯೆಂದೂ ಪ್ರಕೃತಿಯೇ ಸ್ಪಷ್ಟಪಡಿಸುತ್ತದೆ ಅಲ್ಲವೇ? ಏಕೆಂದರೆ, ಅವಳಿಗೆ ಉದ್ದ ಕೂದಲು ಮುಸುಕಿನಂತೆ ಕೊಡಲಾಗಿದೆ.</verse>
				<verse number="16">ಇದರ ಬಗ್ಗೆ ಯಾರಿಗಾದರೂ ವಾಗ್ವಾದ ಮಾಡಬಯಸಿದರೆ, ಇಂಥ ಪದ್ಧತಿ ನಮ್ಮಲ್ಲಿಲ್ಲ, ದೇವರ ಸಭೆಗಳಲ್ಲಿಯೂ ಇಲ್ಲ.</verse>
				<verse number="17">ನಿಮ್ಮನ್ನು ಹೊಗಳುವುದಕ್ಕಾಗಿ ಈ ಮಾರ್ಗದರ್ಶನಗಳನ್ನು ನಾನು ನಿಮಗೆ ತಿಳಿಸುತ್ತಾಯಿಲ್ಲ. ಏಕೆಂದರೆ, ನಿಮ್ಮ ಕೂಟಗಳಿಂದ ಮೇಲಾಗುವುದಕ್ಕಿಂತ ಹೆಚ್ಚು ಕೇಡಾಗುತ್ತಲಿದೆ.</verse>
				<verse number="18">ಹೇಗೆಂದರೆ, ಮೊದಲನೆಯದು: ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮೊಳಗೆ ಭೇದಗಳಿವೆ ಎಂದು ಕೇಳುತ್ತೇನೆ. ಇದನ್ನು ಸ್ವಲ್ಪಮಟ್ಟಿಗೆ ನಂಬುತ್ತೇನೆ.</verse>
				<verse number="19">ದೇವರ ಮೆಚ್ಚುಗೆ ನಿಮ್ಮಲ್ಲಿ ಯಾರ ಮೇಲೆ ಇದೆ ಎಂಬುದು ಕಂಡುಬರುವಂತೆ ಭಿನ್ನಾಭಿಪ್ರಾಯಗಳು ಇರುವುದು ಅವಶ್ಯವೇ.</verse>
				<verse number="20">ನೀವು ಒಟ್ಟಾಗಿ ಕೂಡಿಬರುವಾಗ, ನೀವು ಮಾಡುವ ಭೋಜನವು ಕರ್ತದೇವರ ಭೋಜನವಲ್ಲ.</verse>
				<verse number="21">ಏಕೆಂದರೆ, ಭೋಜನ ಮಾಡುವಾಗ, ಪ್ರತಿಯೊಬ್ಬನು ಇತರರಿಗಾಗಿ ಕಾಯದೇ, ತನ್ನ ಭೋಜನವನ್ನು ಮುಂಚಿತವಾಗಿ ಆರಂಭಿಸುತ್ತಾನೆ. ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದಿರುತ್ತಾನೆ.</verse>
				<verse number="22">ಉಣ್ಣುವುದಕ್ಕೂ, ಕುಡಿಯುವುದಕ್ಕೂ ನಿಮಗೆ ಮನೆಗಳಿಲ್ಲವೇ? ಅಥವಾ ದೇವರ ಸಭೆಯನ್ನು ಹೀನೈಸಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಇದಕ್ಕಾಗಿ ನಾನು ನಿಮ್ಮನ್ನು ಹೊಗಳಬೇಕೆ? ಖಂಡಿತ ಇಲ್ಲ.</verse>
				<verse number="23">ನಾನು ಕರ್ತ ದೇವರಿಂದಲೇ ಪಡೆದದ್ದನ್ನು ನಿಮಗೆ ಒಪ್ಪಿಸಿಕೊಟ್ಟಿದ್ದೇನೆ: ಕರ್ತ ಆಗಿರುವ ಯೇಸು ತಮ್ಮನ್ನು ಹಿಡಿದುಕೊಡಲಾದ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು,</verse>
				<verse number="24">ಸ್ತೋತ್ರಮಾಡಿ ಮುರಿದು, “ಇದು ನಿಮಗೋಸ್ಕರವಾಗಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ,” ಎಂದರು.</verse>
				<verse number="25">ಅದೇ ಪ್ರಕಾರ, ಭೋಜನವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲಾಗುವ, ನನ್ನ ರಕ್ತದಿಂದಾದ ಹೊಸ ಒಡಂಬಡಿಕೆಯಾಗಿದೆ. ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ಜ್ಞಾಪಿಸಿಕೊಳ್ಳುವದಕ್ಕೋಸ್ಕರ ಪಾನಮಾಡಿರಿ,” ಎಂದರು.</verse>
				<verse number="26">ನೀವು ಈ ರೊಟ್ಟಿಯನ್ನು ತಿಂದು, ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ, ಕರ್ತದೇವರ ಮರಣವನ್ನು ಅವರು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.</verse>
				<verse number="27">ಹೀಗಿರುವುದರಿಂದ, ಯಾರಾದರೂ ಅಯೋಗ್ಯವಾಗಿ ಕರ್ತದೇವರ ರೊಟ್ಟಿಯನ್ನು ತಿಂದರೆ, ಇಲ್ಲವೆ ಅವರ ಪಾತ್ರೆಯಲ್ಲಿ ಪಾನ ಮಾಡಿದರೆ, ಅಂಥವರು ಕರ್ತದೇವರ ದೇಹಕ್ಕೂ, ರಕ್ತಕ್ಕೂ ದ್ರೋಹ ಮಾಡಿದವರಾಗಿರುವರು.</verse>
				<verse number="28">ಆದರೆ ಪ್ರತಿಯೊಬ್ಬರೂ ತಮ್ಮನ್ನು ಪರೀಕ್ಷಿಸಿಕೊಂಡವರಾಗಿ, ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.</verse>
				<verse number="29">ಏಕೆಂದರೆ, ಯಾರಾದರು ಕ್ರಿಸ್ತನ ದೇಹವೆಂದು ವಿವೇಚಿಸದೆ ತಿಂದು ಕುಡಿದರೆ, ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವರು.</verse>
				<verse number="30">ಇದರಿಂದ ನಿಮ್ಮಲ್ಲಿ ಬಹುಮಂದಿ ಬಲಹೀನರೂ, ರೋಗಿಗಳೂ ಆಗಿದ್ದಾರೆ, ಕೆಲವರು ನಿದ್ರೆ ಹೋಗಿದ್ದಾರೆ.</verse>
				<verse number="31">ನಮ್ಮನ್ನು ನಾವೇ ತೀರ್ಪುಮಾಡಿಕೊಂಡರೆ, ನಾವು ನ್ಯಾಯವಿಚಾರಣೆಗೆ ಒಳಗಾಗುವುದಿಲ್ಲ.</verse>
				<verse number="32">ನಾವು ಲೋಕದವರ ಸಂಗಡ ದಂಡನೆಗೆ ಗುರಿಯಾಗಬಾರದೆಂದು, ದೇವರು ನಮ್ಮನ್ನು ಈಗ ಈ ರೀತಿಯಾಗಿ ಶಿಸ್ತಿನ ನ್ಯಾಯವಿಚಾರಣೆಗೆ ಒಳಪಡಿಸುತ್ತಾರೆ.</verse>
				<verse number="33">ಹೀಗಿರುವುದರಿಂದ ನನ್ನ ಪ್ರಿಯರೇ, ನೀವು ಭೋಜನಕ್ಕಾಗಿ ಕೂಡಿಬರುವಾಗ ಎಲ್ಲರಿಗಾಗಿ ಕಾದುಕೊಂಡಿರಿ.</verse>
				<verse number="34">ನೀವು ಒಟ್ಟಾಗಿ ಕೂಟಕ್ಕೆ ಸೇರಿಬರುವಾಗ, ನ್ಯಾಯತೀರ್ಪಿಗೆ ಒಳಗಾದಂತೆ, ಹಸಿದವರು ಮನೆಯಲ್ಲೇ ಊಟಮಾಡಲಿ. ಇನ್ನುಳಿದ ವಿಷಯಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.</verse>
			</chapter>
			<chapter number="12">
				<verse number="1">ಪ್ರಿಯರೇ, ಈಗ ಆತ್ಮಿಕ ವರಗಳನ್ನು ಕುರಿತು ನೀವು ಅಜ್ಞಾನಿಗಳಾಗಿರಬಾರದೆಂದು ಅಪೇಕ್ಷಿಸುತ್ತೇನೆ.</verse>
				<verse number="2">ನೀವು ಕ್ರಿಸ್ತನನ್ನು ನಂಬದಿದ್ದಾಗ, ಹೇಗೆ ಮೂಕ ವಿಗ್ರಹಗಳ ಕಡೆಗೆ ಪ್ರಭಾವಗೊಂಡು ದಾರಿತಪ್ಪಿ ಹೋಗಿದ್ದಿರಿ ಎಂಬುದನ್ನು ಬಲ್ಲಿರಿ.</verse>
				<verse number="3">ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ: ದೇವರಾತ್ಮರಿಂದ ಮಾತನಾಡುವ ಯಾವನೂ, “ಯೇಸು ಶಾಪಗ್ರಸ್ತನು,” ಎಂದು ಹೇಳುವುದಿಲ್ಲ. ಪವಿತ್ರಾತ್ಮರಿಂದಲೇ ಹೊರತು, ಯಾವನೂ, “ಯೇಸು ಕರ್ತದೇವರು,” ಎಂದು ಹೇಳಲಾರನು.</verse>
				<verse number="4">ಆತ್ಮಿಕ ವರಗಳಲ್ಲಿ ಬೇರೆ ಬೇರೆ ವಿಧಗಳಿವೆ, ಆದರೆ ಪವಿತ್ರಾತ್ಮರು ಒಬ್ಬರೇ.</verse>
				<verse number="5">ಸೇವೆಗಳಲ್ಲಿ ಬೇರೆ ಬೇರೆ ವಿಧಗಳಿವೆ, ಆದರೆ ಕರ್ತ ಆಗಿರುವವರು ಒಬ್ಬರೇ.</verse>
				<verse number="6">ಕಾರ್ಯರೀತಿಗಳಲ್ಲಿ ಬೇರೆ ಬೇರೆ ವಿಧಗಳಿವೆ, ಎಲ್ಲರಲ್ಲಿಯೂ ಎಲ್ಲಾ ಕಾರ್ಯಗಳನ್ನು ಸಾಧಿಸುವ ದೇವರು ಒಬ್ಬರೇ.</verse>
				<verse number="7">ಸರ್ವರ ಪ್ರಯೋಜನಕ್ಕಾಗಿ ಪವಿತ್ರಾತ್ಮರ ವರಗಳನ್ನು ಪ್ರತಿಯೊಬ್ಬರಿಗೆ ಕೊಡಲಾಗಿದೆ.</verse>
				<verse number="8">ಹೇಗೆಂದರೆ, ಪವಿತ್ರಾತ್ಮ ದೇವರ ಮೂಲಕ ಒಬ್ಬನಿಗೆ ಜ್ಞಾನ ವಾಕ್ಯವು, ಒಬ್ಬನಿಗೆ ಆ ಆತ್ಮರ ಅನುಸಾರವಾಗಿ ವಿದ್ಯಾವಾಕ್ಯವು,</verse>
				<verse number="9">ಒಬ್ಬನಿಗೆ ಅದೇ ಆತ್ಮನಿಂದ ನಂಬಿಕೆಯು, ಮತ್ತೊಬ್ಬನಿಗೆ ಅದೇ ಆತ್ಮನಿಂದ ರೋಗ ವಾಸಿಮಾಡುವ ವರಗಳು ಕೊಡಲಾಗಿವೆ.</verse>
				<verse number="10">ಒಬ್ಬನಿಗೆ ಅದ್ಭುತಕಾರ್ಯಗಳ ಶಕ್ತಿಯೂ ಒಬ್ಬನಿಗೆ ಪ್ರವಾದನೆಯೂ ಒಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವೂ ಒಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಶಕ್ತಿಯೂ ಮತ್ತೊಬ್ಬನಿಗೆ ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವೂ ಕೊಡಲಾಗುತ್ತದೆ.</verse>
				<verse number="11">ಈ ವರಗಳನ್ನೆಲ್ಲ ಆ ಪವಿತ್ರಾತ್ಮ ಒಬ್ಬರೇ ತಮ್ಮ ಚಿತ್ತಾನುಸಾರ ಪ್ರತಿಯೊಬ್ಬನಿಗೂ ಹಂಚಿಕೊಡುತ್ತಾರೆ.</verse>
				<verse number="12">ದೇಹವು ಅನೇಕ ಅಂಗಗಳುಳ್ಳದ್ದಾಗಿದ್ದರೂ ಒಂದಾಗಿರುವಂತೆಯೂ, ಅನೇಕ ಅಂಗಗಳೆಲ್ಲವು ಒಂದೇ ದೇಹವನ್ನು ರೂಪಿಸುವಂತೆಯೂ, ಕ್ರಿಸ್ತನ ದೇಹವು ಸಹ ಇರುತ್ತದೆ.</verse>
				<verse number="13">ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ಒಂದೇ ದೇಹವಾಗುವಂತೆ, ನಾವೆಲ್ಲರೂ ಒಬ್ಬರೇ ಆತ್ಮದಿಂದ ಸ್ನಾನ ಮಾಡಿಸಿಕೊಂಡೆವು. ನಮ್ಮೆಲ್ಲರಿಗೂ ಒಬ್ಬ ಆತ್ಮವನ್ನು ಪಾನವಾಗಿ ಕೊಡಲಾಗಿದೆ.</verse>
				<verse number="14">ದೇಹವು ಒಂದೇ ಅಂಗವಾಗಿರದೆ, ಅನೇಕ ಅಂಗಗಳುಳ್ಳದ್ದಾಗಿದೆ.</verse>
				<verse number="15">ಒಂದು ವೇಳೆ ಕಾಲು, “ನಾನು ಕೈಯಲ್ಲದ ಕಾರಣ, ದೇಹಕ್ಕೆ ಸೇರಿಲ್ಲ,” ಎಂದು ಹೇಳಿದರೂ, ಅದು ದೇಹಕ್ಕೆ ಅಂಗವಾಗಿ ಸೇರದಿರುವುದೇ?</verse>
				<verse number="16">ಒಂದು ವೇಳೆ ಕಿವಿ, “ನಾನು ಕಣ್ಣಲ್ಲದ ಕಾರಣ, ದೇಹಕ್ಕೆ ಸೇರಿಲ್ಲ,” ಎಂದು ಹೇಳಿದರೂ ಅದು ದೇಹಕ್ಕೆ ಅಂಗವಾಗಿ ಸೇರದಿರುವುದೇ?</verse>
				<verse number="17">ದೇಹವೆಲ್ಲಾ ಕಣ್ಣಾದರೆ ನಾವು ಕೇಳುವುದೆಲ್ಲಿ? ಅಥವಾ ಅದೆಲ್ಲಾ ಕಿವಿಯಾದರೆ, ಮೂಸಿ ನೋಡುವುದೆಲ್ಲಿ?</verse>
				<verse number="18">ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತಮ್ಮ ಇಷ್ಟದ ಪ್ರಕಾರ ದೇಹದಲ್ಲಿ ಇಟ್ಟಿದ್ದಾರೆ.</verse>
				<verse number="19">ಅವೆಲ್ಲವೂ ಒಂದೇ ಅಂಗವಾಗಿದ್ದರೆ, ಆಗ ದೇಹವೆಲ್ಲಿ?</verse>
				<verse number="20">ಹೀಗೆ ಅಂಗಗಳು ಅನೇಕವಾಗಿದ್ದರೂ, ದೇಹ ಮಾತ್ರ ಒಂದೇ.</verse>
				<verse number="21">ಕಣ್ಣು ಕೈಗೆ, “ನೀನು ನನಗೆ ಅವಶ್ಯವಿಲ್ಲ!” ಎಂದು ಹೇಳಲಾಗದು. ತಲೆಯು ಕಾಲುಗಳಿಗೆ, “ನೀನು ನನಗೆ ಅವಶ್ಯವಿಲ್ಲ!” ಎಂದು ಹೇಳಲಾಗದು.</verse>
				<verse number="22">ಆದರೆ ದೇಹದಲ್ಲಿ ಬಲಹೀನವಾದವುಗಳೆಂದು ತೋರುವ ಅಂಗಗಳೇ ನಮಗೆ ಎಷ್ಟೋ ಹೆಚ್ಚಾಗಿ ಅವಶ್ಯವಾಗಿವೆ.</verse>
				<verse number="23">ಕಡಿಮೆ ಗೌರವವುಳ್ಳವುಗಳೆಂದು ಯೋಚಿಸುವವುಗಳನ್ನು ವಿಶೇಷ ಗೌರವದಿಂದ ನೋಡುತ್ತೇವೆ. ಬಹಿರಂಗಪಡಿಸದ ಅಂಗಗಳನ್ನು ವಿಶೇಷ ಮರ್ಯಾದೆಯಿಂದ ಸಂರಕ್ಷಿಸುತ್ತೇವೆ.</verse>
				<verse number="24">ನಾವು ಬಾಹ್ಯ ಅಂಗಗಳಿಗೆ ಹೆಚ್ಚಿನ ವಿಶೇಷತೆಯನ್ನು ಕೊಡುವುದಿಲ್ಲ. ಆದರೆ ಗೌರವ ಕಡಿಮೆಯಿರುವ ಅಂಗಗಳಿಗೆ, ದೇವರು ಹೆಚ್ಚು ಗೌರವವನ್ನು ಕೊಡುವಂತೆ, ಎಲ್ಲಾ ಅಂಗಗಳನ್ನು ಒಟ್ಟಾಗಿ ದೇಹದಲ್ಲಿಟ್ಟಿದ್ದಾರೆ.</verse>
				<verse number="25">ಹೀಗೆ ದೇವರು ದೇಹದಲ್ಲಿ ಭಿನ್ನಭೇದವಿಲ್ಲದೇ, ಎಲ್ಲವೂ ಒಂದಕ್ಕೊಂದು ಪರಸ್ಪರ ಚಿಂತಿಸುವುದಾಗಿ ಕೂಡಿ ಹೋಗುವಂತೆ ಸಮಾನವಾಗಿ ಮಾಡಿದ್ದಾರೆ.</verse>
				<verse number="26">ದೇಹದ ಒಂದು ಅಂಗ ಬಾಧೆಪಟ್ಟರೆ, ಎಲ್ಲಾ ಅಂಗಗಳು ಬಾಧೆಪಡುತ್ತದೆ. ಒಂದು ಅಂಗಕ್ಕೆ ಗೌರವ ದೊರೆತರೆ, ಅದರೊಂದಿಗೆ ಪ್ರತಿಯೊಂದು ಅಂಗವೂ ಆನಂದಪಡುತ್ತವೆ.</verse>
				<verse number="27">ಈಗ ನೀವು ಕ್ರಿಸ್ತನ ದೇಹವಾಗಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ಆ ದೇಹದ ಅಂಗಗಳಾಗಿದ್ದೀರಿ.</verse>
				<verse number="28">ದೇವರು ತಮ್ಮ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಅದ್ಭುತಕಾರ್ಯಗಳನ್ನು ಮಾಡುವವರನ್ನು, ರೋಗಗಳನ್ನು ಗುಣಪಡಿಸುವ ವರವನ್ನು, ಪರೋಪಕಾರಿಗಳನ್ನು, ಆಡಳಿತಗಾರರನ್ನು, ವಿವಿಧ ವಾಣಿಗಳನ್ನಾಡುವವರನ್ನು ನೇಮಿಸಿದ್ದಾರೆ.</verse>
				<verse number="29">ಎಲ್ಲರೂ ಅಪೊಸ್ತಲರೋ? ಎಲ್ಲರೂ ಪ್ರವಾದಿಗಳೋ? ಎಲ್ಲರೂ ಬೋಧಕರೋ? ಎಲ್ಲರೂ ಅದ್ಭುತ ಮಾಡುವವರೋ?</verse>
				<verse number="30">ಎಲ್ಲರೂ ರೋಗಗಳನ್ನು ಗುಣಪಡಿಸುವ ವರವನ್ನು ಹೊಂದಿದವರೋ? ಎಲ್ಲರೂ ಪರೋಪಕಾರಿಗಳೋ? ಎಲ್ಲರೂ ಆಡಳಿತಗಾರರೋ? ಎಲ್ಲರೂ ಅನ್ಯಭಾಷೆಗಳನ್ನಾಡುವವರೋ? ಅಥವಾ ಅನ್ಯಭಾಷೆಗಳ ವ್ಯಾಖ್ಯಾನ ಮಾಡುವವರೋ?</verse>
				<verse number="31">ಆದರೆ ನೀವು ಆಸಕ್ತಿಯಿಂದ ಶ್ರೇಷ್ಠ ವರಗಳನ್ನು ಅಪೇಕ್ಷಿಸಿರಿ. ನಾನು ನಿಮಗೆ ಇನ್ನೂ ಸರ್ವೋತ್ತಮವಾದ ಮಾರ್ಗವನ್ನು ತೋರಿಸುತ್ತೇನೆ.</verse>
			</chapter>
			<chapter number="13">
				<verse number="1">ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ನನಗೆ ಪ್ರೀತಿಯಿಲ್ಲದಿದ್ದರೆ, ನಾದ ಕೊಡುವ ಕಂಚೂ ಗಣಗಣಿಸುವ ತಾಳವೂ ಆಗಿದ್ದೇನೆ.</verse>
				<verse number="2">ನನಗೆ ಪ್ರವಾದನ ವರವಿದ್ದರೂ ನಾನು ಎಲ್ಲಾ ರಹಸ್ಯಗಳನ್ನೂ, ಸಕಲ ವಿದ್ಯೆಯನ್ನು ತಿಳಿದಿದ್ದರೂ ಬೆಟ್ಟಗಳನ್ನು ಕದಲಿಸುವಷ್ಟು ನಂಬಿಕೆಯಿದ್ದರೂ ನನಗೆ ಪ್ರೀತಿಯಿಲ್ಲದಿದ್ದರೆ, ಶೂನ್ಯನಾಗಿದ್ದೇನೆ.</verse>
				<verse number="3">ನಾನು ನನ್ನ ಎಲ್ಲಾ ಆಸ್ತಿಯನ್ನು ದಾನಮಾಡಿದರೂ, ನಾನು ಹೊಗಳಿಕೊಳ್ಳುವಂತೆ ನನ್ನ ದೇಹವನ್ನು ಸುಡುವುದಕ್ಕಾಗಿ ಒಪ್ಪಿಸಿಕೊಟ್ಟರೂ ಪ್ರೀತಿಯು ನನಗಿಲ್ಲದಿದ್ದರೆ, ನನಗೇನೂ ಪ್ರಯೋಜನವಾಗುವುದಿಲ್ಲ.</verse>
				<verse number="4">ಪ್ರೀತಿ ತಾಳ್ಮೆಯುಳ್ಳದ್ದು, ಪ್ರೀತಿ ದಯೆಯುಳ್ಳದ್ದು, ಪ್ರೀತಿ ಅಸೂಯೆಪಡುವುದಿಲ್ಲ, ಪ್ರೀತಿ ಹೊಗಳಿಕೊಳ್ಳುವುದಿಲ್ಲ, ಗರ್ವಪಡುವುದಿಲ್ಲ,</verse>
				<verse number="5">ಪ್ರೀತಿಯು ಇತರರನ್ನು ಅವಮಾನಪಡಿಸುವುದಿಲ್ಲ, ಸ್ವಹಿತವನ್ನೇ ಹುಡುಕುವುದಿಲ್ಲ, ಸುಲಭವಾಗಿ ಸಿಟ್ಟುಗೊಳ್ಳುವುದಿಲ್ಲ, ಅಪಕಾರವನ್ನು ಎಣಿಸುವುದಿಲ್ಲ,</verse>
				<verse number="6">ಪ್ರೀತಿ ಕೆಟ್ಟದ್ದರಲ್ಲಿ ಸಂತೋಷಪಡುವುದಿಲ್ಲ, ಸತ್ಯದೊಂದಿಗೆ ಸಂತೋಷ ಪಡುತ್ತದೆ.</verse>
				<verse number="7">ಯಾವಾಗಲೂ ಸಂರಕ್ಷಿಸುತ್ತದೆ, ಯಾವಾಗಲೂ ನಂಬುತ್ತದೆ, ಯಾವಾಗಲೂ ನಿರೀಕ್ಷಿಸುತ್ತದೆ, ಯಾವಾಗಲೂ ಸಹಿಸಿಕೊಳ್ಳುತ್ತದೆ.</verse>
				<verse number="8">ಪ್ರೀತಿಯು ಎಂದಿಗೂ ಅಳಿದುಹೋಗುವುದಿಲ್ಲ, ಪ್ರವಾದನೆಗಳಾದರೋ ಇಲ್ಲದಂತಾಗುವುವು, ಅನ್ಯ ಭಾಷೆಗಳು ಗತಿಸಿ ಹೋಗುವುವು, ವಿದ್ಯೆಯೋ ಇಲ್ಲದಂತಾಗುವುವು.</verse>
				<verse number="9">ನಾವು ಅಪೂರ್ಣವಾಗಿ ತಿಳಿದುಕೊಂಡಿದ್ದೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ.</verse>
				<verse number="10">ಆದರೆ ಸಂಪೂರ್ಣವಾದದ್ದು ಬಂದಾಗ, ಭಾಗವಾದದ್ದು ಅಳಿದುಹೋಗುವುದು.</verse>
				<verse number="11">ನಾನು ಬಾಲಕನಾಗಿದ್ದಾಗ, ಬಾಲಕನ ಮಾತುಗಳನ್ನಾಡಿದೆನು, ಬಾಲಕನಂತೆ ಯೋಚಿಸಿದೆನು, ಬಾಲಕನಂತೆಯೇ ತರ್ಕಿಸಿದೆನು. ಪ್ರೌಢನಾದಾಗ ಬಾಲ್ಯದವುಗಳನ್ನು ಬಿಟ್ಟುಬಿಟ್ಟೆನು.</verse>
				<verse number="12">ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ಆಗ ಮುಖಾಮುಖಿಯಾಗಿ ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದಿದೆ. ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ, ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.</verse>
				<verse number="13">ಆದರೆ ಈಗ ನಂಬಿಕೆ, ನಿರೀಕ್ಷೆ, ಪ್ರೀತಿ, ಈ ಮೂರೇ ಉಳಿದಿರುತ್ತವೆ. ಇವುಗಳಲ್ಲಿ ಮಹತ್ತಾದದ್ದು ಪ್ರೀತಿಯೇ.</verse>
			</chapter>
			<chapter number="14">
				<verse number="1">ಪ್ರೀತಿಯ ಮಾರ್ಗ ಅನುಸರಿಸಿರಿ, ಆತ್ಮಿಕ ವರಗಳನ್ನು, ವಿಶೇಷವಾಗಿ ಪ್ರವಾದಿಸುವ ವರವನ್ನು ಆಸಕ್ತಿಯಿಂದ ಅಪೇಕ್ಷಿಸಿರಿ.</verse>
				<verse number="2">ಅನ್ಯಭಾಷೆಗಳನ್ನು ಆಡುವವನು ಮನುಷ್ಯರ ಸಂಗಡವಲ್ಲ, ದೇವರೊಂದಿಗೆ ಮಾತನಾಡುತ್ತಾನೆ. ಅವನು ಮಾತನಾಡುವುದನ್ನು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ. ಏಕೆಂದರೆ ಅವನು ಆತ್ಮದಲ್ಲಿ ರಹಸ್ಯಗಳನ್ನು ಮಾತನಾಡುವವನಾಗಿದ್ದಾನೆ.</verse>
				<verse number="3">ಪ್ರವಾದಿಸುವವನಾದರೋ, ಜನರ ಭಕ್ತಿವೃದ್ಧಿಗಾಗಿ, ಪ್ರೋತ್ಸಾಹಕ್ಕಾಗಿ, ಸಂತೈಸುವಿಕೆಗಾಗಿ ಮಾತನಾಡುತ್ತಾನೆ.</verse>
				<verse number="4">ಅನ್ಯಭಾಷೆಗಳನ್ನಾಡುವವನು ತನಗೆ ಭಕ್ತಿವೃದ್ಧಿಯನ್ನುಂಟುಮಾಡಿಕೊಳ್ಳುವನು. ಆದರೆ ಪ್ರವಾದಿಸುವವನು ಸಭೆಗೆ ಭಕ್ತಿವೃದ್ಧಿಯನ್ನುಂಟುಮಾಡಿಕೊಳ್ಳುತ್ತಾನೆ.</verse>
				<verse number="5">ನೀವೆಲ್ಲರೂ ಅನ್ಯಭಾಷೆಗಳನ್ನಾಡಬೇಕೆಂದು ಈಗ ನಾನು ಅಪೇಕ್ಷಿಸಿದರೂ, ಅದಕ್ಕಿಂತ ಹೆಚ್ಚಾಗಿ ನೀವು ಪ್ರವಾದಿಸಬೇಕೆಂದು ಅಪೇಕ್ಷಿಸುತ್ತೇನೆ. ಅನ್ಯಭಾಷೆಗಳನ್ನಾಡುವವನು ಸಭೆಗೆ ಭಕ್ತಿವೃದ್ಧಿಯಾಗುವಂತೆ ಅದರ ಅರ್ಥವನ್ನು ಹೇಳದೆ ಹೋದರೆ, ಅವನಿಗಿಂತ ಪ್ರವಾದಿಸುವವನೇ ಶ್ರೇಷ್ಠನು.</verse>
				<verse number="6">ಹೀಗಿರುವುದರಿಂದ ಪ್ರಿಯರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟನೆಯಿಂದಾಗಲಿ, ವಿದ್ಯೆಯಿಂದಾಗಲಿ, ಪ್ರವಾದನೆಯಿಂದಾಗಲಿ, ಉಪದೇಶದಿಂದಾಗಲಿ ಮಾತನಾಡದೆ, ಅನ್ಯಭಾಷೆಗಳಿಂದ ಮಾತನಾಡುವವನಾಗಿದ್ದರೆ, ನನ್ನಿಂದ ನಿಮಗೇನು ಪ್ರಯೋಜನ?</verse>
				<verse number="7">ಕೊಳಲು, ವೀಣೆ ಮೊದಲಾದ ನಿರ್ಜೀವ ವಾದ್ಯಗಳ ಸ್ವರಗಳ ಹಾಗೆ, ವಿವಿಧ ಶೃತಿಗಳು ಕಂಡುಬರದಿದ್ದರೆ, ಊದಿದ್ದು ಕೊಳಲೋ ಅಥವಾ ಬಾರಿಸಿದ್ದು ವೀಣೆಯೋ ಎಂದು ತಿಳಿಯುವುದು ಹೇಗೆ?</verse>
				<verse number="8">ತುತೂರಿಯನ್ನು ಸ್ಪಷ್ಟವಾಗಿ ಊದದಿದ್ದರೆ, ಯಾರು ತಾನೇ ಯುದ್ಧಕ್ಕೆ ಸನ್ನದ್ಧರಾಗುವರು?</verse>
				<verse number="9">ಅದರಂತೆಯೇ, ನೀವೂ ಸ್ಪಷ್ಟವಾದ ಭಾಷೆಯಿಂದ ಮಾತನಾಡದೆ ಹೋದರೆ, ಮಾತನಾಡಿದ್ದು ಏನೆಂದು ತಿಳಿಯುವುದು ಹೇಗೆ? ನೀವು ಗಾಳಿಯ ಸಂಗಡ ಮಾತನಾಡಿದ ಹಾಗಿರುವುದಷ್ಟೆ.</verse>
				<verse number="10">ಲೋಕದಲ್ಲಿ ಎಷ್ಟು ವಿಧವಾದ ಭಾಷೆಗಳಿದ್ದರೂ, ಅವುಗಳಲ್ಲಿ ಒಂದಾದರೂ ಅರ್ಥರಹಿತವಾದುದಲ್ಲ.</verse>
				<verse number="11">ನಾನು ಭಾಷೆಯ ಅರ್ಥವನ್ನು ಗ್ರಹಿಸದಿದ್ದರೆ, ಮಾತಾಡುವವನಿಗೆ ನಾನು ಅನ್ಯದೇಶದವನಂತಿರುವೆನು, ಮಾತನಾಡುವವನು ನನಗೆ ಅನ್ಯದೇಶದವನಂತಿರುವನು.</verse>
				<verse number="12">ಅದರಂತೆಯೇ, ನೀವು ಸಹ ಆತ್ಮಿಕ ವರಗಳನ್ನು ಬಯಸುವುದರಿಂದ, ಸಭೆಗೆ ಭಕ್ತಿವೃದ್ಧಿ ಉಂಟುಮಾಡುವ ವರಗಳನ್ನೇ ಸಮೃದ್ಧವಾಗಿ ಪ್ರಯತ್ನಿಸಿರಿ.</verse>
				<verse number="13">ಆದ್ದರಿಂದ, ಅನ್ಯಭಾಷೆಗಳನ್ನಾಡುವವನು ತಾನಾಡುವ ಮಾತಿನ ಅರ್ಥವನ್ನು ಹೇಳುವುದಕ್ಕೆ ದೇವರನ್ನು ಪ್ರಾರ್ಥಿಸಲಿ.</verse>
				<verse number="14">ಏಕೆಂದರೆ ನಾನು ಅನ್ಯಭಾಷೆಗಳಲ್ಲಿ ಪ್ರಾರ್ಥಿಸಿದರೆ, ನನ್ನ ಆತ್ಮವು ಪ್ರಾರ್ಥಿಸುವುದು. ಆದರೆ ನನ್ನ ಬುದ್ಧಿ ನಿಷ್ಫಲವಾಗಿರುವುದು.</verse>
				<verse number="15">ಹಾಗಾದರೇನು? ನಾನು ಆತ್ಮದಿಂದ ಪ್ರಾರ್ಥಿಸುವೆನು, ಬುದ್ಧಿಯಿಂದಲೂ ಪ್ರಾರ್ಥಿಸುವೆನು. ಆತ್ಮದಿಂದ ಹಾಡುವೆನು, ಬುದ್ಧಿಯಿಂದಲೂ ಹಾಡುವೆನು.</verse>
				<verse number="16">ನೀನು ಆತ್ಮದಲ್ಲಿ ಮಾತ್ರ ಸ್ತೋತ್ರ ಮಾಡಿದರೆ, ತಿಳುವಳಿಕೆ ಇಲ್ಲದೆ ಕುಳಿತಿರುವವನು ನಿನ್ನ ಕೃತಜ್ಞತಾಸ್ತುತಿಗೆ, “ಆಮೆನ್” ಎಂದು ಹೇಳುವುದು ಹೇಗೆ?</verse>
				<verse number="17">ನೀನು ಚೆನ್ನಾಗಿ ಕೃತಜ್ಞತಾಸ್ತುತಿ ಮಾಡುತ್ತೀ ನಿಜವೇ. ಆದರೆ, ಮತ್ತೊಬ್ಬನಿಗೆ ಭಕ್ತಿವೃದ್ಧಿಯಾಗಲಿಲ್ಲ.</verse>
				<verse number="18">ನಾನು ನಿಮ್ಮೆಲ್ಲರಿಗಿಂತಲೂ ಹೆಚ್ಚಾಗಿ ಅನ್ಯಭಾಷೆಗಳನ್ನಾಡುತ್ತೇನೆಂದು ದೇವರಿಗೆ ಕೃತಜ್ಞತೆ ಮಾಡುತ್ತೇನೆ.</verse>
				<verse number="19">ಆದರೂ ಸಭೆಯಲ್ಲಿ ಅನ್ಯಭಾಷೆಗಳಿಂದ ಹತ್ತು ಸಾವಿರ ಮಾತುಗಳನ್ನಾಡುವುದಕ್ಕಿಂತ, ನನ್ನ ಬುದ್ಧಿಯಿಂದ ಐದೇ ಮಾತುಗಳನ್ನಾಡಿ, ಇತರರಿಗೆ ಉಪದೇಶ ಮಾಡುವುದನ್ನೇ ನಾನು ಇಷ್ಟಪಡುತ್ತೇನೆ.</verse>
				<verse number="20">ಸಹೋದರರೇ, ಮಕ್ಕಳಂತೆ ಯೋಚಿಸುವುದನ್ನು ಬಿಟ್ಟುಬಿಡಿರಿ. ಕೇಡಿನ ವಿಷಯದಲ್ಲಿ ಶಿಶುಗಳಂತೆ ಇದ್ದರೂ, ನಿಮ್ಮ ಯೋಚನೆಯಲ್ಲಿ ಪ್ರಾಯಸ್ಥರಾಗಿರಿ.</verse>
				<verse number="21">“ಬೇರೆಭಾಷೆಯವರ ಮೂಲಕವಾಗಿಯೂ ವಿದೇಶದವರ ತುಟಿಗಳಿಂದಲೂ ನಾನು ಈ ಜನರೊಡನೆ ಮಾತಾಡುವೆನು, ಆದರೂ ಅವರು ನನಗೆ ಕಿವಿಗೊಡುವುದಿಲ್ಲವೆಂದು ಕರ್ತದೇವರು ಹೇಳುತ್ತಾರೆ,” ಎಂದು ನಿಯಮದಲ್ಲಿ ಬರೆದಿದೆ.</verse>
				<verse number="22">ಆದ್ದರಿಂದ, ಅನ್ಯಭಾಷೆಗಳನ್ನಾಡುವುದು ವಿಶ್ವಾಸಿಗಳಿಗೆ ಅಲ್ಲ, ಅವಿಶ್ವಾಸಿಗಳಿಗೆ ಸೂಚನೆಯಾಗಿದೆ. ಆದರೆ ಪ್ರವಾದಿಸುವುದು ಅವಿಶ್ವಾಸಿಗಳಿಗಲ್ಲ, ವಿಶ್ವಾಸಿಗಳಿಗೆ ಸೂಚನೆಯಾಗಿದೆ.</verse>
				<verse number="23">ಆದಕಾರಣ ಸಭೆಯೆಲ್ಲವೂ ಕೂಡಿಬಂದಾಗ ಎಲ್ಲರೂ ಅನ್ಯಭಾಷೆಗಳನ್ನಾಡಿದರೆ, ಅಜ್ಞಾನಿಗಳು ಇಲ್ಲವೆ ಅವಿಶ್ವಾಸಿಗಳು ಒಳಗೆ ಬಂದು, ನೀವು ಹುಚ್ಚರೆಂದು ಹೇಳುವುದಿಲ್ಲವೇ?</verse>
				<verse number="24">ಆದರೆ ನೀವೆಲ್ಲರೂ ಪ್ರವಾದಿಸುತ್ತಿರಲು, ಅವಿಶ್ವಾಸಿಯಾಗಲಿ, ಅನ್ವೇಷಕನಾಗಲಿ ಒಳಗೆ ಬಂದರೆ, ಅವನು ತಾನು ಪಾಪಿಯೆಂಬ ಮನವರಿಕೆಯನ್ನು ಹೊಂದುವನು. ಅವನು ಎಲ್ಲರ ಮಾತಿನಿಂದ ಪರಿಶೋಧಿತನಾಗುವನು.</verse>
				<verse number="25">ಅವನ ಹೃದಯದ ರಹಸ್ಯಗಳು ಬಯಲಾಗುವುವು. ಅವನು ಅಡ್ಡಬಿದ್ದು ದೇವರನ್ನು ಆರಾಧಿಸಿ, “ದೇವರು ನಿಜವಾಗಿಯೂ ನಿಮ್ಮ ಮಧ್ಯದಲ್ಲಿ ಇದ್ದಾರೆ!” ಎಂದು ಪ್ರಕಟಪಡಿಸುವನು.</verse>
				<verse number="26">ಹಾಗಾದರೇನು ಪ್ರಿಯರೇ? ನೀವು ಸಭೆಯಾಗಿ ಕೂಡಿಬರುವಾಗ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಸಂದೇಶವಾಗಲಿ, ಪ್ರಕಟನೆಯಾಗಲಿ, ಅನ್ಯಭಾಷೆಯನ್ನಾಡುವುದಾಗಲಿ, ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವಾಗಲಿ ಇರುತ್ತದಷ್ಟೆ. ಇವೆಲ್ಲವೂ ಸಭೆಗೆ ಭಕ್ತಿವೃದ್ಧಿಗಾಗಿಯೇ ಇರಲಿ.</verse>
				<verse number="27">ಯಾವನಾದರೂ ಅನ್ಯಭಾಷೆಗಳನ್ನಾಡುವುದಾದರೆ, ಇಬ್ಬರು ಅಥವಾ ಹೆಚ್ಚೆಂದರೆ ಮೂವರು ಒಬ್ಬೊಬ್ಬರಾಗಿ ಮಾತನಾಡಬೇಕು, ಒಬ್ಬನು ಅರ್ಥವನ್ನು ಹೇಳಲಿ.</verse>
				<verse number="28">ಅರ್ಥವನ್ನು ಹೇಳುವವನಿಲ್ಲದಿದ್ದರೆ, ಅನ್ಯಭಾಷೆಗಳನ್ನಾಡುವವನು ಸಭೆಯಲ್ಲಿ ಮೌನವಾಗಿರಲಿ. ಅವನು ತನ್ನೊಂದಿಗೂ ದೇವರೊಂದಿಗೂ ಮಾತನಾಡಿಕೊಳ್ಳಲಿ.</verse>
				<verse number="29">ಪ್ರವಾದಿಗಳು ಇಬ್ಬರಾಗಲಿ, ಮೂವರಾಗಲಿ ಮಾತಾಡಲಿ, ಇತರರರು ವಿವೇಚನೆ ಮಾಡಲಿ.</verse>
				<verse number="30">ಕುಳಿತಿರುವ ಮತ್ತೊಬ್ಬನಿಗೆ ಏನಾದರೂ ಪ್ರಕಟನೆಯಾದರೆ, ಮೊದಲಿನವನು ಮೌನವಾಗಿರಲಿ.</verse>
				<verse number="31">ಎಲ್ಲರೂ ಕಲಿತುಕೊಳ್ಳುವಂತೆಯೂ, ಎಲ್ಲರೂ ಪ್ರೋತ್ಸಾಹ ಹೊಂದುವಂತೆಯೂ, ನೀವೆಲ್ಲರು ಒಬ್ಬೊಬ್ಬರಾಗಿ ಪ್ರವಾದಿಸಿರಿ.</verse>
				<verse number="32">ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿವೆ.</verse>
				<verse number="33">ದೇವಜನರ ಎಲ್ಲಾ ಸಭೆಗಳಲ್ಲಿರುವಂತೆ, ದೇವರು ಗಲಿಬಿಲಿಯ ದೇವರಲ್ಲ, ಸಮಾಧಾನದ ದೇವರಾಗಿದ್ದಾರೆ.</verse>
				<verse number="34">ದೇವಜನರ ಎಲ್ಲಾ ಸಭೆಗಳಲ್ಲಿರುವಂತೆ ಸ್ತ್ರೀಯರು ಸಭೆಯ ಕೂಟಗಳಲ್ಲಿ ಮೌನವಾಗಿರಲಿ. ಏಕೆಂದರೆ ಮಾತನಾಡಲು ಅವರಿಗೆ ಅನುಮತಿಯಿಲ್ಲ, ನಿಯಮವು ಸಹ ಹೇಳಿರುವಂತೆ ಅವರು ಅಧೀನರಾಗಿರಬೇಕು.</verse>
				<verse number="35">ಅವರು ಏನಾದರೂ ಕಲಿಯಬಯಸಿದರೆ, ಮನೆಯಲ್ಲಿ ಗಂಡಂದಿರನ್ನು ಕೇಳಲಿ. ಸ್ತ್ರೀಯರು ಸಭೆಯಲ್ಲಿ ಮಾತನಾಡುವುದು ನಾಚಿಕೆಪಡುವಂಥದಾಗಿದೆ.</verse>
				<verse number="36">ದೇವರ ವಾಕ್ಯವು ನಿಮ್ಮಿಂದ ಹೊರಟಿತೋ? ಅಥವಾ ಅದು ತಲುಪಿದ್ದು ನಿಮಗೆ ಮಾತ್ರವೋ?</verse>
				<verse number="37">ಯಾವನಾದರೂ ತನ್ನನ್ನು ಪ್ರವಾದಿಯೆಂದಾಗಲಿ, ಆತ್ಮನ ವರಗಳನ್ನು ಹೊದಿದವನೆಂದಾಗಲಿ ಭಾವಿಸುವುದಾದರೆ, ನಾನು ನಿಮಗೆ ಬರೆದಿರುವ ಸಂಗತಿಗಳು ಕರ್ತದೇವರ ಆಜ್ಞೆಗಳೆಂದು ಸ್ಪಷ್ಟವಾಗಿ ತಿಳಿದುಕೊಳ್ಳಲಿ.</verse>
				<verse number="38">ಆದರೆ ಯಾರಾದರೂ ಇದನ್ನು ತಿರಸ್ಕಸಿದರೆ, ಅವರೂ ತಿರಸ್ಕಾರಕ್ಕೆ ಗುರಿಯಾಗುವರು.</verse>
				<verse number="39">ಆದಕಾರಣ ನನ್ನ ಪ್ರಿಯರೇ, ಪ್ರವಾದಿಸುವ ವರಕ್ಕಾಗಿ ಆಸಕ್ತರಾಗಿರಿ. ಅನ್ಯಭಾಷೆಯನ್ನಾಡುವುದಕ್ಕೆ ಅಡ್ಡಿಮಾಡಬೇಡಿರಿ.</verse>
				<verse number="40">ಆದರೆ ಎಲ್ಲವನ್ನೂ ಯೋಗ್ಯವಾಗಿಯೂ ಕ್ರಮವಾಗಿಯೂ ಮಾಡಿರಿ.</verse>
			</chapter>
			<chapter number="15">
				<verse number="1">ಪ್ರಿಯರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನೂ, ನೀವು ಅದನ್ನು ಸ್ವೀಕರಿಸಿದ್ದನ್ನೂ, ಅದರಲ್ಲಿ ನಿಂತಿರುವುದನ್ನೂ, ಈಗ ನಿಮಗೆ ನೆನಪಿಸುತ್ತೇನೆ.</verse>
				<verse number="2">ನಾನು ಸಾರಿದ ಈ ಸುವಾರ್ತೆಯ ವಾಕ್ಯವನ್ನು ನೀವು ಬಿಗಿಯಾಗಿ ಹಿಡಿದುಕೊಂಡರೆ, ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ, ನಿಮ್ಮ ನಂಬಿಕೆ ವ್ಯರ್ಥವಾಗಿ ಹೋಗುತ್ತದೆ.</verse>
				<verse number="3">ಏಕೆಂದರೆ ನಾನು ಪಡೆದುಕೊಂಡಿದ್ದರಲ್ಲಿ ಬಹು ಪ್ರಾಮುಖ್ಯವಾದದ್ದನ್ನೇ ನಿಮಗೆ ಕೊಟ್ಟಿದ್ದೇನೆ. ಅದೇನೆಂದರೆ, ಪವಿತ್ರ ವೇದದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತರು,</verse>
				<verse number="4">ಹೂಣಿಡಲಾದರು, ಪವಿತ್ರ ವೇದದ ಪ್ರಕಾರವೇ ಮೂರನೆಯ ದಿನದಲ್ಲಿ ಎದ್ದು ಬಂದರು.</verse>
				<verse number="5">ಕೇಫನಿಗೂ ಆಮೇಲೆ ಹನ್ನೆರಡು ಮಂದಿಗೂ ಕಾಣಿಸಿಕೊಂಡರು.</verse>
				<verse number="6">ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚು ಮಂದಿ ಹಿಂಬಾಲಕರಿಗೆ ಕ್ರಿಸ್ತ ಯೇಸು ಕಾಣಿಸಿಕೊಂಡರು. ಅವರಲ್ಲಿ ಕೆಲವರು ಸತ್ತು ಹೋಗಿದ್ದರೂ ಬಹುಜನರು ಇಂದಿಗೂ ಬದುಕಿದ್ದಾರೆ.</verse>
				<verse number="7">ತರುವಾಯ ಕ್ರಿಸ್ತ ಯೇಸು ಯಾಕೋಬನಿಗೂ ಆಮೇಲೆ ಅಪೊಸ್ತಲರೆಲ್ಲರಿಗೂ ಕಾಣಿಸಿಕೊಂಡರು.</verse>
				<verse number="8">ಕಟ್ಟಕಡೆಗೆ, ದಿನತುಂಬುವ ಮೊದಲೇ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು.</verse>
				<verse number="9">ನಾನಾದರೋ ಅಪೊಸ್ತಲರಲ್ಲಿ ಕನಿಷ್ಠನು, ಅಪೊಸ್ತಲನೆನಿಸಿಕೊಳ್ಳುವುದಕ್ಕೆ ನಾನು ಯೋಗ್ಯನಲ್ಲ, ಏಕೆಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿದೆನು.</verse>
				<verse number="10">ಆದರೆ ನಾನು ಎಂಥವನಾಗಿದ್ದೇನೋ, ಅದು ದೇವರ ಕೃಪೆಯಿಂದಲೇ ಆಗಿರುತ್ತದೆ. ನನಗುಂಟಾದ ದೇವರ ಕೃಪೆಯು ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.</verse>
				<verse number="11">ಆದ್ದರಿಂದ ನಾನಾದರೇನು, ಅವರಾದರೇನು ಇದನ್ನೇ ನಾವು ಸಾರುವುದು, ಇದನ್ನೇ ನೀವು ನಂಬಿದ್ದೀರಿ.</verse>
				<verse number="12">ಆದರೆ ಕ್ರಿಸ್ತ ಯೇಸು ಸತ್ತವರೊಳಗಿಂದ ಎದ್ದು ಬಂದಿರುತ್ತಾರೆಂದು ಸಾರುತ್ತಿರುವಲ್ಲಿ ನಿಮ್ಮೊಳಗೆ ಕೆಲವರು ಸತ್ತವರಿಗೆ ಪುನರುತ್ಥಾನ ಇಲ್ಲ ಎಂದು ಹೇಳುವುದು ಹೇಗೆ?</verse>
				<verse number="13">ಈಗ ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, ಕ್ರಿಸ್ತಯೇಸುವಾದರೂ ಎದ್ದು ಬರಲಿಲ್ಲ.</verse>
				<verse number="14">ಕ್ರಿಸ್ತ ಯೇಸು ಎದ್ದು ಬರಲಿಲ್ಲವಾದರೆ, ನಮ್ಮ ಪ್ರಸಂಗವೂ ನಿಮ್ಮ ವಿಶ್ವಾಸವೂ ನಿಷ್ಪ್ರಯೋಜನವಾದದ್ದು.</verse>
				<verse number="15">ಅದು ಮಾತ್ರವಲ್ಲ, ದೇವರು ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರೆಂದು ದೇವರ ಬಗ್ಗೆ ಸಾಕ್ಷಿಕೊಟ್ಟ ನಾವೂ ಸುಳ್ಳುಸಾಕ್ಷಿಗಳಾಗಿ ಕಂಡುಬರುವೆವು. ದೇವರು ಕ್ರಿಸ್ತನನ್ನು ಎಬ್ಬಿಸದಿದ್ದರೆ ಸತ್ತವರನ್ನೂ ದೇವರು ಎಬ್ಬಿಸುವುದಿಲ್ಲ.</verse>
				<verse number="16">ಸತ್ತವರು ಎದ್ದುಬರುವುದಿಲ್ಲವಾದರೆ, ಕ್ರಿಸ್ತ ಯೇಸುವೂ ಎದ್ದುಬಂದಿಲ್ಲ.</verse>
				<verse number="17">ಕ್ರಿಸ್ತ ಯೇಸುವು ಎದ್ದುಬಂದಿಲ್ಲವಾದರೆ, ನಿಮ್ಮ ವಿಶ್ವಾಸವೂ ವ್ಯರ್ಥವಾಗಿದೆ, ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.</verse>
				<verse number="18">ಅಲ್ಲದೆ, ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಟ್ಟು ನಿದ್ರೆ ಹೋದವರು ಸಹ ನಾಶವಾದರು.</verse>
				<verse number="19">ನಾವು ಈ ಜೀವನದಲ್ಲಿ ಮಾತ್ರ ಕ್ರಿಸ್ತ ಯೇಸುವಿನಲ್ಲಿ ನಿರೀಕ್ಷೆಯಿಟ್ಟು ಕೊಂಡಿರುವವರಾಗಿದ್ದರೆ, ನಾವು ಎಲ್ಲಾ ಮನುಷ್ಯರಲ್ಲಿಯೂ ಕನಿಕರಪಡತಕ್ಕವರೇ ಆಗುತ್ತೇವೆ.</verse>
				<verse number="20">ಆದರೆ ಈಗ ಕ್ರಿಸ್ತ ಯೇಸು ಸತ್ತವರೊಳಗಿಂದ ಎದ್ದು ಬಂದೇ ಇದ್ದಾರೆ. ನಿದ್ರೆ ಹೋದವರಲ್ಲಿ ಪ್ರಥಮಫಲವಾಗಿದ್ದಾರೆ.</verse>
				<verse number="21">ಏಕೆಂದರೆ ಒಬ್ಬ ಮನುಷ್ಯನ ಮೂಲಕ ಮರಣವು ಬಂದಂತೆಯೇ, ಒಬ್ಬ ಮನುಷ್ಯನ ಮೂಲಕ ಸತ್ತವರಿಗೆ ಪುನರುತ್ಥಾನವು ಸಹ ಬರುವುದು.</verse>
				<verse number="22">ಏಕೆಂದರೆ, ಆದಾಮನಲ್ಲಿ ಎಲ್ಲರೂ ಸತ್ತಂತೆಯೇ, ಕ್ರಿಸ್ತನಲ್ಲಿ ಎಲ್ಲರೂ ಜೀವಂತರಾಗುವರು.</verse>
				<verse number="23">ಆದರೆ ಒಬ್ಬೊಬ್ಬರು ತಮ್ಮ ತಮ್ಮ ಕ್ರಮದ ಅನುಸಾರವಾಗಿ ಎದ್ದು ಬರುವರು. ಪ್ರಥಮಫಲವಾಗಿ ಕ್ರಿಸ್ತನು, ತರುವಾಯ ಕ್ರಿಸ್ತನ ಪುನರಾಗಮನದಲ್ಲಿ ಕ್ರಿಸ್ತನಿಗೆ ಸೇರಿದವರು ಎದ್ದು ಬರುವರು.</verse>
				<verse number="24">ಆಮೇಲೆ ಕ್ರಿಸ್ತನು ಎಲ್ಲಾ ಆಧಿಪತ್ಯವನ್ನೂ ಎಲ್ಲಾ ಅಧಿಕಾರವನ್ನೂ ಎಲ್ಲಾ ಶಕ್ತಿಯನ್ನೂ ತೆಗೆದುಹಾಕಿ, ರಾಜ್ಯವನ್ನು ತಂದೆ ದೇವರಿಗೆ ಒಪ್ಪಿಸಿಕೊಡುವಾಗ ಸಮಾಪ್ತಿಯಾಗುವುದು.</verse>
				<verse number="25">ಏಕೆಂದರೆ, ಕ್ರಿಸ್ತನು ಎಲ್ಲಾ ಶತ್ರುಗಳನ್ನು ತನ್ನ ಪಾದಗಳ ಕೆಳಗೆ ಹಾಕಿಕೊಳ್ಳುವ ತನಕ ಆಳುವುದು ಅವಶ್ಯ.</verse>
				<verse number="26">ಕೊನೆಯದಾಗಿ, ನಿರ್ಮೂಲವಾಗುವ ವೈರಿ ಮರಣವೇ.</verse>
				<verse number="27">ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿ ಅವರಿಗೆ ಅಧೀನಮಾಡಿದ್ದಾರೆ. “ಸಮಸ್ತವೂ ಅವರಿಗೆ ಅಧೀನ ಮಾಡಲಾಗಿದೆ” ಎಂದು ಹೇಳುವಾಗ, ಸಮಸ್ತವನ್ನೂ ಕ್ರಿಸ್ತನಿಗೆ ಅಧೀನಮಾಡಿಕೊಟ್ಟ ದೇವರು ಇದರಲ್ಲಿ ಒಳಪಡಲಿಲ್ಲ ಎಂಬುದು ಸ್ಪಷ್ಟವಾಗಿದೆ.</verse>
				<verse number="28">ಸಮಸ್ತವೂ ಅವರಿಗೆ ಅಧೀನವಾದ ಮೇಲೆ, ಮಗನೂ ಸಹ ಸಮಸ್ತವನ್ನೂ ತನಗೆ ಅಧೀನಮಾಡಿಕೊಟ್ಟ ದೇವರಿಗೆ ತಾವೇ ಅಧೀನರಾಗುವರು. ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.</verse>
				<verse number="29">ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವವರು ಏನು ಮಾಡುವರು? ಸತ್ತವರು ನಿಜವಾಗಿಯೂ ಎದ್ದುಬರುವುದಿಲ್ಲವಾದರೆ, ಅವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದು ಏಕೆ?</verse>
				<verse number="30">ನಾವು ಸಹ ಪ್ರತಿ ಗಳಿಗೆಯಲ್ಲಿಯೂ ಅಪಾಯದಲ್ಲಿರುವುದೇಕೆ?</verse>
				<verse number="31">ಸಹೋದರರೇ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ನನಗೆ ನಿಮ್ಮ ಬಗ್ಗೆ ನಿಶ್ಚಯವಾಗಿರುವ ಹೆಮ್ಮೆಯಿಂದ ನಾನು ದಿನದಿನವು ಸಾಯುತ್ತಲಿದ್ದೇನೆ.</verse>
				<verse number="32">ನಾನು ಎಫೆಸದಲ್ಲಿ ಕಾಡು ಮೃಗಗಳೊಂದಿಗೆ ಹೋರಾಟ ಮಾಡಿದ್ದು ಕೇವಲ ಮಾನವ ಕಾರಣಗಳಿಂದ ಮಾತ್ರವಾಗಿದ್ದರೆ, ಅದರಿಂದ ನನಗೇನು ಪ್ರಯೋಜನ? ಸತ್ತವರು ಎದ್ದುಬರುವುದಿಲ್ಲವಾದರೆ, “ತಿನ್ನೋಣ, ಕುಡಿಯೋಣ, ನಾಳೆ ಮರಣ ಹೊಂದೋಣ.”</verse>
				<verse number="33">ಮೋಸಹೋಗಬೇಡಿರಿ. ಏಕೆಂದರೆ, “ದುಸ್ಸಹವಾಸವು ಸದಾಚಾರವನ್ನು ಕೆಡಿಸುತ್ತದೆ.”</verse>
				<verse number="34">ಸ್ವಸ್ಥಚಿತ್ತರಾಗಿರಿ, ಪಾಪಮಾಡುವುದನ್ನು ನಿಲ್ಲಿಸಿರಿ. ಕೆಲವರಂತೂ ದೇವರನ್ನೇ ಅಲಕ್ಷ್ಯಮಾಡುವವರಾಗಿದ್ದಾರೆ. ನಿಮಗೆ ನಾಚಿಕೆಯಾಗಬೇಕೆಂದು ನಾನು ಇದನ್ನು ಹೇಳುತ್ತೇನೆ.</verse>
				<verse number="35">“ಸತ್ತವರು ಎದ್ದೇಳುವುದು ಹೇಗೆ? ಎಂಥ ದೇಹದಿಂದ ಎದ್ದು ಬರುತ್ತಾರೆ?” ಎಂದು ಯಾರಾದರೂ ಕೇಳಬಹುದು.</verse>
				<verse number="36">ಮತಿಹೀನ ಮನುಷ್ಯನೇ! ನೀನು ಬಿತ್ತುವ ಬೀಜವು ಸಾಯದಿದ್ದರೆ, ಅದು ಜೀವಂತವಾಗುವುದಿಲ್ಲ.</verse>
				<verse number="37">ನೀನು ಒಂದು ವೇಳೆ ಗೋಧಿಯನ್ನಾಗಲಿ, ಬೇರೆ ಯಾವುದೇ ಬೀಜವನ್ನಾಗಲಿ ಬಿತ್ತುವಾಗ, ಬರೀ ಕಾಳನ್ನೇ ಹೊರತು ಮುಂದೆ ಆಗಬೇಕಾದ ದೇಹವನ್ನು ಬಿತ್ತುವುದಿಲ್ಲ.</verse>
				<verse number="38">ಆದರೆ ದೇವರು ತಾನು ನಿರ್ಣಯಿಸಿದಂತೆ ಅದಕ್ಕೆ ದೇಹವನ್ನು ಕೊಡುತ್ತಾರೆ ಮತ್ತು ಒಂದೊಂದು ಬೀಜಕ್ಕೂ ಅದರದರ ದೇಹವನ್ನು ಕೊಡುತ್ತಾರೆ.</verse>
				<verse number="39">ಎಲ್ಲಾ ದೇಹಗಳು ಒಂದೇ ವಿಧವಾಗಿಲ್ಲ. ಮನುಷ್ಯನ ದೇಹ ಬೇರೆ, ಪಶುಗಳ ದೇಹ ಬೇರೆ, ಪಕ್ಷಿಗಳ ದೇಹ ಬೇರೆ, ಮೀನುಗಳದೇ ಬೇರೆ.</verse>
				<verse number="40">ಪರಲೋಕದ ದೇಹಗಳಿವೆ, ಭೂಲೋಕದ ದೇಹಗಳಿವೆ. ಆದರೆ ಪರಲೋಕದ ದೇಹಗಳ ಮಹಿಮೆಯೇ ಬೇರೆ, ಭೂಲೋಕದ ದೇಹಗಳ ಮಹಿಮೆಯೇ ಬೇರೆ.</verse>
				<verse number="41">ಸೂರ್ಯನ ಮಹಿಮೆ ಬೇರೆ, ಚಂದ್ರನ ಮಹಿಮೆಯೇ ಬೇರೆ ವಿಧ, ನಕ್ಷತ್ರಗಳ ಮಹಿಮೆ ಇನ್ನೊಂದು ವಿಧ. ಏಕೆಂದರೆ, ನಕ್ಷತ್ರ ನಕ್ಷತ್ರಕ್ಕೆ ಮಹಿಮೆಯಲ್ಲಿ ವ್ಯತ್ಯಾಸವಾಗಿರುವುದು.</verse>
				<verse number="42">ಸತ್ತವರಿಗಾಗುವ ಪುನರುತ್ಥಾನವು ಸಹ ಹಾಗೆಯೇ ಇರುವುದು. ದೇಹವು ಅಳಿಯುವ ಅವಸ್ಥೆಯಲ್ಲಿ ಬಿತ್ತಲಾಗುತ್ತದೆ. ಅಮರತ್ವ ಅವಸ್ಥೆಯಲ್ಲಿ ಎದ್ದು ಬರುವುದು.</verse>
				<verse number="43">ದೇಹವು ಹೀನಾವಸ್ಥೆಯಲ್ಲಿ ಬಿತ್ತಲಾಗುತ್ತದೆ. ಮಹಿಮೆಯಲ್ಲಿ ಎದ್ದು ಬರುವುದು. ಬಲಹೀನತೆಯಲ್ಲಿ ಬಿತ್ತಲಾಗುತ್ತದೆ, ಶಕ್ತಿಯಲ್ಲಿ ಎದ್ದು ಬರುವುದು.</verse>
				<verse number="44">ಪ್ರಾಕೃತ ದೇಹವಾಗಿ ಬಿತ್ತಲಾಗುತ್ತದೆ, ಆತ್ಮಿಕ ದೇಹವಾಗಿ ಎದ್ದು ಬರುವುದು. ಪ್ರಾಕೃತ ದೇಹವಿರುವುದಾದರೆ, ಆತ್ಮಿಕ ದೇಹವೂ ಇರುವುದು.</verse>
				<verse number="45">“ಮೊದಲನೆಯ ಮನುಷ್ಯನಾದ ಆದಾಮನು ಜೀವಿಸುವ ವ್ಯಕ್ತಿಯಾದನು,” ಎಂದು ಬರೆದಿದೆಯಲ್ಲವೇ? ಕಡೇ ಆದಾಮನು ಜೀವಕೊಡುವ ಆತ್ಮನಾದನು.</verse>
				<verse number="46">ಆತ್ಮಿಕವಾದದ್ದು ಮೊದಲು ಬರಲಿಲ್ಲ, ಪ್ರಾಕೃತವಾದದ್ದೇ ಮೊದಲನೆಯದು, ಅನಂತರ ಆತ್ಮಿಕವಾದದ್ದು.</verse>
				<verse number="47">ಮೊದಲನೆಯ ಮನುಷ್ಯ, ಭೂಮಿಯ ಮಣ್ಣಿನವನಾಗಿದ್ದಾನೆ, ಎರಡನೆಯ ಮನುಷ್ಯನು ಪರಲೋಕದಿಂದ ಬಂದವನು.</verse>
				<verse number="48">ಮಣ್ಣಿನ ಮನುಷ್ಯನು ಎಂಥವನೋ, ಮಣ್ಣಿಗೆ ಸೇರಿದವರೂ ಅಂಥವರೇ. ಪರಲೋಕದ ಮನುಷ್ಯನು ಎಂಥವನೋ, ಪರಲೋಕಕ್ಕೆ ಸಂಬಂಧಿಸಿದವರೂ ಅಂಥವರಾಗಿರುವರು.</verse>
				<verse number="49">ನಾವು ಮಣ್ಣಿನ ಮನುಷ್ಯನ ಸಾರೂಪ್ಯವನ್ನು ಧರಿಸಿಕೊಂಡಿರುವ ಪ್ರಕಾರ, ಪರಲೋಕದ ಮನುಷ್ಯನ ಸಾರೂಪ್ಯವನ್ನೂ ಧರಿಸಿಕೊಳ್ಳುವೆವು.</verse>
				<verse number="50">ಪ್ರಿಯರೇ, ನಾನು ಹೇಳುವುದೇನೆಂದರೆ, ರಕ್ತಮಾಂಸವು ದೇವರ ರಾಜ್ಯಕ್ಕೆ ಬಾಧ್ಯವಾಗಲಾರವು. ಅಳಿಯುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲಾರದು.</verse>
				<verse number="51">ನಾನು ರಹಸ್ಯವಾಗಿದ್ದ ಸಂಗತಿಯನ್ನು ನಿಮಗೆ ಹೇಳುತ್ತೇನೆ ಕೇಳಿರಿ: ನಾವೆಲ್ಲರೂ ನಿದ್ರೆ ಹೋಗುವುದಿಲ್ಲ, ನಾವೆಲ್ಲರೂ ರೂಪಾಂತರವಾಗುವೆವು.</verse>
				<verse number="52">ಆದರೆ ಒಂದು ಕ್ಷಣದಲ್ಲೇ, ರೆಪ್ಪೆ ಬಡಿಯುವಷ್ಟರಲ್ಲಿ, ಕಡೇ ತುತೂರಿಯು ಊದಲಾಗುವುದು. ತುತೂರಿ ಧ್ವನಿಯಾಗುವಾಗ, ಸತ್ತವರು ಅಮರತ್ವಪಡೆದು ಎಬ್ಬಿಸಲಾಗುವರು, ನಾವು ರೂಪಾಂತರವಾಗುವೆವು.</verse>
				<verse number="53">ಅಳಿಯುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದು, ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದು.</verse>
				<verse number="54">ನಶಿಸಿಹೋಗುವಂಥದ್ದು ನಶಿಸಿಹೋಗದಂಥದ್ದನ್ನೂ, ಮರಣಾಧೀನವಾದ ಈ ದೇಹವು ಅಮರತ್ವವನ್ನೂ ಧರಿಸಿಕೊಳ್ಳುವಾಗ, ಬರೆದಿರುವ ಈ ಮಾತುಗಳು ನೆರವೇರುವುದು: “ಮರಣವು ನುಂಗಿಯೇ ಹೋಯಿತು, ಜಯವಾಯಿತು.”</verse>
				<verse number="55">“ಓ ಮರಣವೇ, ನಿನ್ನ ಜಯವು ಎಲ್ಲಿ? ಓ ಮರಣವೇ, ನಿನ್ನ ವಿಷದ ಕೊಂಡಿ ಎಲ್ಲಿ?”</verse>
				<verse number="56">ಮರಣದ ಕೊಂಡಿ ಪಾಪವೇ ಮತ್ತು ಪಾಪದ ಶಕ್ತಿಯು ನಿಯಮವೇ.</verse>
				<verse number="57">ಆದರೆ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.</verse>
				<verse number="58">ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.</verse>
			</chapter>
			<chapter number="16">
				<verse number="1">ಈಗ ದೇವಜನರಿಗೋಸ್ಕರ ಹಣ ಕೂಡಿಸಿಡುವುದನ್ನು ಕುರಿತು: ನಾನು ಗಲಾತ್ಯದ ಸಭೆಗಳಿಗೆ ಹೇಳಿದ್ದನ್ನೇ ನೀವೂ ಮಾಡಿರಿ.</verse>
				<verse number="2">ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಆದಾಯಕ್ಕೆ ತಕ್ಕಂತೆ ವಾರದ ಮೊದಲನೆಯ ದಿನದಲ್ಲಿ ಕೂಡಿಟ್ಟುಕೊಂಡಿರಲಿ. ಹೀಗೆ ಮಾಡಿದರೆ, ನಾನು ಬಂದಾಗ ನೀವು ಹಣ ಕೂಡಿಸುವ ಅವಶ್ಯವಿರುವುದಿಲ್ಲ.</verse>
				<verse number="3">ನಾನು ನಿಮ್ಮಲ್ಲಿಗೆ ಬಂದಾಗ, ನೀವು ಯಾರನ್ನು ಅನುಮೋದಿಸುವಿರೋ, ಅವರಿಗೆ ಪತ್ರ ಕೊಟ್ಟು ನಿಮ್ಮ ಕೊಡುಗೆಯನ್ನು ತೆಗೆದುಕೊಂಡು ಯೆರೂಸಲೇಮಿಗೆ ಹೋಗುವಂತೆ ಕಳುಹಿಸುವೆನು.</verse>
				<verse number="4">ನಾನು ಸಹ ಹೋಗುವುದು ಯುಕ್ತವಾಗಿದ್ದರೆ, ಅವರು ನನ್ನೊಂದಿಗೆ ಬರಲಿ.</verse>
				<verse number="5">ಮಕೆದೋನ್ಯವನ್ನು ದಾಟಿದ ಮೇಲೆ, ಅದೇ ಮಾರ್ಗವಾಗಿ ನಾನು ಪುನಃ ನಿಮ್ಮ ಬಳಿಗೆ ಬರುವೆನು.</verse>
				<verse number="6">ಬಹುಶಃ ನಾನು ಸ್ವಲ್ಪ ಸಮಯ ನಿಮ್ಮೊಂದಿಗೆ ಇದ್ದ ಮೇಲೆ ಅಥವಾ ಚಳಿಗಾಲವನ್ನು ಪೂರ್ತಿಯಾಗಿ ನಿಮ್ಮೊಂದಿಗೆ ಕಳೆಯಲು ಬಯಸುತ್ತೇನೆ. ಹೀಗೆ ನಾನು ಹೋಗಬೇಕಾದ ಸ್ಥಳಗಳಲ್ಲಿ ನೀವು ನನಗೆ ಸಹಾಯ ಮಾಡಬಹುದು.</verse>
				<verse number="7">ನಾನು ಹಾದುಹೋಗುವಾಗ, ನಿಮ್ಮನ್ನು ಸ್ವಲ್ಪ ಸಮಯ ಮಾತ್ರ ಸಂದರ್ಶಿಸುವುದಕ್ಕೆ ನನಗೆ ಇಷ್ಟವಿಲ್ಲ. ಕರ್ತನು ಅನುಮತಿಸಿದರೆ, ನಿಮ್ಮ ಬಳಿಯಲ್ಲಿ ಬಂದು ಹೆಚ್ಚುಕಾಲ ಇರುವೆನೆಂದು ನಿರೀಕ್ಷಿಸುತ್ತೇನೆ.</verse>
				<verse number="8">ಆದರೆ ಐವತ್ತು ದಿನಗಳ ಹಬ್ಬದ ತನಕ ಎಫೆಸದಲ್ಲಿರುವೆನು.</verse>
				<verse number="9">ಏಕೆಂದರೆ, ಪರಿಣಾಮಕಾರಿಯಾದ ಸೇವೆಗೆ ದೊಡ್ಡದಾಗಿ ಬಾಗಿಲು ನನಗೆ ತೆರೆದಿದೆ, ಬಹಳ ಜನ ವಿರೋಧಿಗಳೂ ಇದ್ದಾರೆ.</verse>
				<verse number="10">ನನ್ನ ಹಾಗೆಯೇ ತಿಮೊಥೆ ಕರ್ತನ ಸೇವೆ ಮಾಡುತ್ತಿದ್ದಾನೆ. ಅವನು ಬಂದರೆ, ಅವನು ನಿಮ್ಮೊಂದಿಗಿರುವಾಗ ಅವನಿಗೆ ಯಾವ ಭಯವೂ ಇಲ್ಲದಂತೆ ನೋಡಿಕೊಳ್ಳಿರಿ.</verse>
				<verse number="11">ಯಾರೂ ಅವನನ್ನು ಹೀನಾಯವಾಗಿ ಕಾಣಬಾರದು. ಆದರೆ ಅವನು ನನ್ನ ಬಳಿಗೆ ಬರುವಂತೆ ಅವನನ್ನು ಸಮಾಧಾನದಿಂದ ಕಳುಹಿಸಿಕೊಡಿರಿ. ಅವನು ಸಹೋದರರೊಂದಿಗೆ ಬರುವುದನ್ನು ಎದುರು ನೋಡುತ್ತಿದ್ದೇನೆ.</verse>
				<verse number="12">ಈಗ ನಮ್ಮ ಸಹೋದರನಾದ ಅಪೊಲ್ಲೋಸನ ವಿಷಯವೇನೆಂದರೆ, ಅವನು ಇತರ ಸಹೋದರರೊಂದಿಗೆ ನಿಮ್ಮ ಬಳಿಗೆ ಬರಬೇಕೆಂದು ಅವನಿಗೆ ಬಹಳವಾಗಿ ಕೇಳಿಕೊಂಡೆನು. ಆದರೆ ಈಗ ಬರುವುದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿಲ್ಲ. ಅವನು ತನಗೆ ಸಂದರ್ಭ ಸಿಕ್ಕಿದಾಗ ಬರುವನು.</verse>
				<verse number="13">ಎಚ್ಚರವಾಗಿರಿ, ವಿಶ್ವಾಸದಲ್ಲಿ ಸ್ಥಿರವಾಗಿ ನಿಲ್ಲಿರಿ, ಧೈರ್ಯವಾಗಿರಿ, ಬಲಗೊಳ್ಳಿರಿ.</verse>
				<verse number="14">ನೀವು ಮಾಡುವುದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.</verse>
				<verse number="15">ಸ್ತೆಫನನ ಕುಟುಂಬದವರು ಅಖಾಯದಲ್ಲಿ ಪ್ರಥಮವಾಗಿ ವಿಶ್ವಾಸಿಗಳಾದವರು ಎಂಬುದನ್ನು ನೀವು ಬಲ್ಲಿರಿ. ಅವರು ದೇವಜನರಿಗೆ ಸೇವೆ ಮಾಡುವುದಕ್ಕಾಗಿ ತಮ್ಮನ್ನೇ ಸಮರ್ಪಿಸಿಕೊಂಡವರಾಗಿದ್ದಾರೆ.</verse>
				<verse number="16">ಪ್ರಿಯರೇ, ನೀವು ಇಂಥವರಿಗೂ ಈ ಸೇವೆಯಲ್ಲಿ ಅವರೊಂದಿಗೆ ಪ್ರಯಾಸಪಡುವವರಿಗೂ ವಿಧೇಯರಾಗಿರಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.</verse>
				<verse number="17">ಸ್ತೆಫನನೂ ಫೊರ್ತುನಾತನೂ ಅಖಾಯಿಕನೂ ಬಂದುದರಿಂದ ನನಗೆ ಸಂತೋಷವಾಯಿತು. ನೀವಿಲ್ಲದ್ದ ಕೊರತೆಯನ್ನು ಅವರು ನನಗೆ ಒದಗಿಸಿದ್ದಾರೆ.</verse>
				<verse number="18">ಅವರು ನನ್ನ ಆತ್ಮವನ್ನೂ, ನಿಮ್ಮ ಆತ್ಮಗಳನ್ನೂ ಉಪಶಮನ ಮಾಡಿದರು. ನೀವು ಇಂಥವರನ್ನು ಸನ್ಮಾನಿಸಿರಿ.</verse>
				<verse number="19">ಏಷ್ಯಾದ ಸೀಮೆಯ ಸಭೆಗಳವರು ನಿಮ್ಮನ್ನು ವಂದಿಸುತ್ತಾರೆ. ಅಕ್ವಿಲನೂ ಮತ್ತು ಪ್ರಿಸ್ಕಳೂ ತಮ್ಮ ಮನೆಯಲ್ಲಿ ಕೂಡುವ ಸಭೆಯವರೊಂದಿಗೆ ಕರ್ತನ ಹೆಸರಿನಲ್ಲಿ ನಿಮ್ಮನ್ನು ಹೃದಯಪೂರ್ವಕವಾಗಿ ವಂದಿಸುತ್ತಾರೆ.</verse>
				<verse number="20">ಸಹೋದರರೆಲ್ಲರೂ ನಿಮ್ಮನ್ನು ವಂದಿಸುತ್ತಾರೆ. ಪವಿತ್ರವಾದ ಮುದ್ದಿಟ್ಟು, ಒಬ್ಬರನ್ನೊಬ್ಬರು ವಂದಿಸಿರಿ.</verse>
				<verse number="21">ಪೌಲನೆಂಬ ನಾನು, ಸ್ವಂತ ಕೈಯಿಂದ ಈ ವಂದನೆಯನ್ನು ಬರೆದಿದ್ದೇನೆ.</verse>
				<verse number="22">ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ, ಅವನು ಶಾಪಗ್ರಸ್ತನಾಗಲಿ! ಕರ್ತನೇ, ಬಾ!</verse>
				<verse number="23">ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮೊಂದಿಗಿರಲಿ.</verse>
				<verse number="24">ಕ್ರಿಸ್ತ ಯೇಸುವಿನಲ್ಲಿ ನನ್ನ ಪ್ರೀತಿಯು ನಿಮ್ಮೆಲ್ಲರೊಂದಿಗೆ ಇದೆ. ಆಮೆನ್.</verse>
			</chapter>
		</book>
		<book number="47">
			<chapter number="1">
				<verse number="1">ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ, ಕೊರಿಂಥದಲ್ಲಿರುವ ದೇವರ ಸಭೆಗೆ ಮತ್ತು ಅಖಾಯ ಪ್ರಾಂತದಲ್ಲಿರುವ ಎಲ್ಲಾ ಪವಿತ್ರ ಜನರಿಗೆ ಬರೆಯುವ ಪತ್ರ:</verse>
				<verse number="2">ನಮ್ಮ ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.</verse>
				<verse number="3">ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ಅವರು ಕರುಣೆಯುಳ್ಳ ತಂದೆಯೂ ಎಲ್ಲರನ್ನೂ ಆದರಿಸುವ ದೇವರೂ ಆಗಿದ್ದಾರೆ.</verse>
				<verse number="4">ದೇವರು ನಮಗಾಗುವ ಎಲ್ಲಾ ಬಾಧೆಗಳಲ್ಲಿ ನಮ್ಮನ್ನು ಸಂತೈಸುವವರಾಗಿದ್ದಾರೆ. ಇತರರು ಬಾಧೆಗಳನ್ನು ಅನುಭವಿಸುತ್ತಿರುವಾಗ, ನಾವು ಸಹ ದೇವರಿಂದ ಹೊಂದಿರುವ ಸಂತೈಸುವಿಕೆಯಿಂದ ಅವರನ್ನು ಸಂತೈಸಲು ನಮ್ಮನ್ನು ಶಕ್ತರನ್ನಾಗಿ ಮಾಡಿದ್ದಾರೆ.</verse>
				<verse number="5">ಕ್ರಿಸ್ತ ಯೇಸುವಿನ ಸಂಕಟವು ನಮ್ಮಲ್ಲಿ ಹೇಗೆ ಅಧಿಕವಾಗಿದೆಯೋ ಹಾಗೆಯೇ, ಕ್ರಿಸ್ತ ಯೇಸುವಿನ ಮೂಲಕ ನಮ್ಮ ಸಂತೈಸುವಿಕೆಯೂ ನಮ್ಮಲ್ಲಿ ಅಧಿಕವಾಗಿರುತ್ತದೆ.</verse>
				<verse number="6">ನಮಗೆ ಕಷ್ಟಸಂಕಟಗಳು ಬಂದರೆ, ಅದು ನಿಮ್ಮ ಆದರಣೆ ಮತ್ತು ರಕ್ಷಣೆಗೋಸ್ಕರವೇ ಇರುತ್ತದೆ. ನಾವು ಸಂತೈಸುವಿಕೆಯನ್ನು ಹೊಂದಿರುವುದಾದರೆ, ಅದು ನಿಮ್ಮ ಆದರಣೆಗಾಗಿಯೇ. ಆ ಆದರಣೆಯು ನಮ್ಮಂತೆ ನೀವು ಅನುಭವಿಸುವ ಕಷ್ಟಸಂಕಟಗಳನ್ನು ಸಹನೆಯಿಂದ ಅನುಭವಿಸುವಂತೆ ಮಾಡುವುದು.</verse>
				<verse number="7">ನಿಮಗಾಗಿರುವ ನಮ್ಮ ನಿರೀಕ್ಷೆಯು ಸ್ಥಿರವಾಗಿದೆ. ಏಕೆಂದರೆ, ನಮ್ಮ ಕಷ್ಟಸಂಕಟಗಳಲ್ಲಿ ನೀವು ಪಾಲುಗಾರರಾಗಿದ್ದಂತೆಯೇ, ನಮ್ಮ ಸಂತೈಸುವಿಕೆಗಳಲ್ಲಿಯೂ ನೀವು ನಮ್ಮೊಂದಿಗೆ ಪಾಲುಗಾರರಾಗಿದ್ದೀರಿ ಎಂದು ನಮಗೆ ಗೊತ್ತಿದೆ.</verse>
				<verse number="8">ಪ್ರಿಯರೇ, ನಾವು ಏಷ್ಯಾ ಪ್ರಾಂತದಲ್ಲಿ ಅನುಭವಿಸಿದ ಕಷ್ಟ ಸಂಕಟಗಳ ಬಗ್ಗೆ ನೀವು ತಿಳಿಯಬೇಕೆಂದು ಬಯಸುತ್ತೇವೆ. ನಾವು ಸಹಿಸುವುದಕ್ಕೆ ಬಹುಕಷ್ಟಕರವಾದ ಒತ್ತಡಗಳು ನಮಗೆ ಬಂದೊದಗಿದಾಗ, ಅವು ನಮ್ಮ ಪ್ರಾಣಕ್ಕೂ ಅಪಾಯಕಾರಿ ಎಂದೆನಿಸಿತು.</verse>
				<verse number="9">ಮರಣದ ಶಿಕ್ಷೆಯನ್ನು ನಾವು ಅನುಭವಿಸುತ್ತೇವೋ ಎಂಬಂತೆ ನಮಗಾಯಿತು. ನಾವು ನಮ್ಮ ಮೇಲೆ ಭರವಸೆಯಿಡದೆ, ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸೆ ಇಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು.</verse>
				<verse number="10">ನಾವು ಭರವಸೆಯಿಟ್ಟ ದೇವರು ಅಂಥಾ ಮರಣಕರ ಅಪಾಯದಿಂದ ನಮ್ಮನ್ನು ತಪ್ಪಿಸಿದ್ದಾರೆ ಮತ್ತು ಮುಂದೆಯೂ ಅಪಾಯಗಳಿಂದ ನಮ್ಮನ್ನು ಪಾರುಮಾಡುವರು.</verse>
				<verse number="11">ನೀವು ನಿಮ್ಮ ಪ್ರಾರ್ಥನೆಯಿಂದ ನಮಗೆ ಸಹಾಯಮಾಡಿರಿ. ಹೀಗೆ, ಬಹಳ ಜನರ ಪ್ರಾರ್ಥನೆಗಳಿಗೆ ಉತ್ತರವಾಗಿ ನಮಗೆ ದೊರಕಿದ ಕೃಪೆಯ ಮೆಚ್ಚುಗೆಗಾಗಿ, ಅನೇಕರು ನಮ್ಮ ಪರವಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುವರು.</verse>
				<verse number="12">ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.</verse>
				<verse number="13">ನಿಮಗೆ ಓದಲು ಅಥವಾ ಅರ್ಥಮಾಡಿಕೊಳ್ಳಲು ಅಸಾಧ್ಯವಾದ ಯಾವುದನ್ನೂ ನಾವು ಬರೆಯಲಿಲ್ಲ.</verse>
				<verse number="14">ಈಗ ನೀವು ನಮ್ಮನ್ನು ಸ್ವಲ್ಪಮಟ್ಟಿಗೆ ಅರಿತುಕೊಂಡಿದ್ದೀರಿ. ಆದರೆ ಕರ್ತ ಆಗಿರುವ ಯೇಸುವಿನ ಪುನರಾಗಮನ ದಿನದಲ್ಲಿ ನಾವು ನಿಮ್ಮ ಬಗ್ಗೆ ಹೆಮ್ಮೆ ಪಡುವಂತೆ, ನಮ್ಮ ಬಗ್ಗೆ ಹೆಮ್ಮೆ ಪಡಲು ನೀವು ಸಂಪೂರ್ಣವಾಗಿ ನಮ್ಮನ್ನು ಅರಿತುಕೊಳ್ಳುವಿರೆಂಬ ನಿರೀಕ್ಷೆ ನಮಗಿದೆ.</verse>
				<verse number="15">ಈ ಭರವಸೆಯಿಂದ, ನಾನು ನಿಮ್ಮನ್ನು ಮೊದಲು ಸಂದರ್ಶಿಸಿ, ನಿಮಗೆ ಎರಡರಷ್ಟು ಉಪಯುಕ್ತತೆಯನ್ನು ಹೊಂದುವಂತೆ ಯೋಚನೆ ಮಾಡಿದ್ದೆನು.</verse>
				<verse number="16">ಮಕೆದೋನ್ಯಕ್ಕೆ ಹೋಗುವಾಗ ನಾನು ನಿಮ್ಮನ್ನು ಸಂದರ್ಶಿಸುವೆನು, ಅಲ್ಲಿಂದ ಹಿಂದಿರುಗಿ ಬರುವಾಗಲೂ ನಿಮ್ಮನ್ನು ಸಂದರ್ಶಿಸಲು ನಾನೇ ಯೂದಾಯಕ್ಕೆ ಬರುವಂತೆ ಯೋಚನೆ ಮಾಡಿದ್ದೆನು.</verse>
				<verse number="17">ನಾನು ಇದನ್ನು ಯೋಚಿಸಿದಾಗ, ಚಂಚಲಹೃದಯವನ್ನು ತಾಳಿದೆನೋ? ಅಥವಾ, ಒಮ್ಮೆ ಅದು “ಹೌದು, ಹೌದು” ಅದೇ ಕ್ಷಣದಲ್ಲಿ ಅದು “ಅಲ್ಲ, ಅಲ್ಲ” ಎಂದು ನಾನು ಲೋಕ ರೀತಿಯಾಗಿ ಯೋಜನೆಯನ್ನು ತಯಾರಿಸಿದ್ದೇನೋ?</verse>
				<verse number="18">ನಿಶ್ಚಯವಾಗಿ, ದೇವರು ಹೇಗೆ ಪ್ರಾಮಾಣಿಕತೆಗೆ ಯೋಗ್ಯರೋ, ಹಾಗೆಯೇ ನಾವು ನಿಮಗೆ ಕೊಟ್ಟ ಸಂದೇಶವೂ, ಒಮ್ಮೆ “ಹೌದು,” ಒಮ್ಮೆ “ಅಲ್ಲ” ಎಂದಾಗಿರುವುದಿಲ್ಲ.</verse>
				<verse number="19">ನಾನು, ಸಿಲ್ವಾನ ಮತ್ತು ತಿಮೊಥೆಯನು ನಿಮ್ಮಲ್ಲಿ ಬೋಧಿಸಿದ ದೇವರ ಪುತ್ರನಾದ ಯೇಸು ಕ್ರಿಸ್ತನು ಒಮ್ಮೆ “ಹೌದು,” ಒಮ್ಮೆ “ಅಲ್ಲ” ಎಂದಾಗಿರುವುದಿಲ್ಲ. ಯಾವಾಗಲೂ ಅದು ಕ್ರಿಸ್ತನಲ್ಲಿ ಹೌದು ಎಂದೇ ಆಗಿರುತ್ತಾನೆ.</verse>
				<verse number="20">ದೇವರು ಕೊಟ್ಟಿರುವ ವಾಗ್ದಾನಗಳೆಲ್ಲವೂ ಕ್ರಿಸ್ತ ಯೇಸುವಿನಲ್ಲಿ “ಹೌದು” ಎಂದೇ ಇರುತ್ತದೆ. ಕ್ರಿಸ್ತ ಯೇಸುವಿನ ಮೂಲಕ ನಾವು ಅದಕ್ಕೆ “ಆಮೆನ್” ಎಂದು ದೇವರ ಮಹಿಮೆಗಾಗಿ ಎನ್ನುತ್ತೇವೆ.</verse>
				<verse number="21">ನೀವೂ ನಾವೂ ಕ್ರಿಸ್ತ ಯೇಸುವಿನಲ್ಲಿ ದೃಢವಾಗಿ ನಿಲ್ಲುವಂತೆ ದೇವರು ನಮ್ಮನ್ನು ಸ್ಥಿರಪಡಿಸುತ್ತಾರೆ. ದೇವರು ನಮ್ಮನ್ನು ಅಭಿಷೇಕಿಸಿ,</verse>
				<verse number="22">ನಮ್ಮ ಮೇಲೆ ದೇವರಿಗಿರುವ ಅಧಿಕಾರವೆಂಬ ಮುದ್ರೆಯನ್ನು ಒತ್ತಿದರು. ಮಾತ್ರವಲ್ಲದೇ ತಮ್ಮ ಪವಿತ್ರಾತ್ಮನನ್ನು ಖಾತರಿಯಾಗಿ ನಮ್ಮ ಹೃದಯದಲ್ಲಿಟ್ಟರು.</verse>
				<verse number="23">ನಿಮಗೆ ಶ್ರಮೆ ಪಡಿಸಬಾರದೆಂದು ನಾನು ಕೊರಿಂಥಕ್ಕೆ ಹಿಂದಿರುಗಿ ಬರಲಿಲ್ಲ. ಇದಕ್ಕೆ ದೇವರೇ ಸಾಕ್ಷಿ.</verse>
				<verse number="24">ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತೇವೆಂದು ತಿಳಿಯಬೇಡಿರಿ. ಆದರೆ ನಿಮ್ಮ ಆನಂದಕ್ಕಾಗಿ ಕೆಲಸಮಾಡಿ, ನಾವೂ ಭಾಗಿಗಳಾಗಿರಲು ಬಯಸುತ್ತೇವೆ. ಏಕೆಂದರೆ, ನೀವು ವಿಶ್ವಾಸದಲ್ಲಿ ದೃಢವಾಗಿ ನಿಂತಿದ್ದೀರಲ್ಲ.</verse>
			</chapter>
			<chapter number="2">
				<verse number="1">ಆದ್ದರಿಂದ ಇನ್ನೊಮ್ಮೆ ನಿಮ್ಮ ಬಳಿಗೆ ಬಂದು ನಿಮಗೆ ವೇದನೆಯನ್ನು ಉಂಟುಮಾಡಬಾರದೆಂದು ನಾನು ನಿರ್ಧರಿಸಿಕೊಂಡೆನು.</verse>
				<verse number="2">ನಾನೇ ನಿಮ್ಮನ್ನು ದುಃಖಪಡಿಸಿದರೆ, ನಾನು ದುಃಖಪಡಿಸಿದ ನಿಮ್ಮನ್ನಲ್ಲದೆ ನನ್ನನ್ನು ಆನಂದಪಡಿಸುವವರು ಬೇರೆ ಯಾರಿದ್ದಾರೆ?</verse>
				<verse number="3">ನಾನು ಬಂದಾಗ ನನ್ನನ್ನು ಆನಂದಪಡಿಸತಕ್ಕವರಿಂದಲೇ ದುಃಖ ಹೊಂದಬಾರದೆಂದು ನಾನು ಹಿಂದಿನ ಪತ್ರವನ್ನು ನಿಮಗೆ ಬರೆದಿದ್ದೇನೆ. ನನ್ನ ಆನಂದದಲ್ಲಿ ನೀವೆಲ್ಲರೂ ಪಾಲಾಗುವಿರಿ ಎಂದು ನಿಮ್ಮೆಲ್ಲರ ವಿಷಯದಲ್ಲಿ ನನಗೆ ಭರವಸೆ ಇದೆ.</verse>
				<verse number="4">ಏಕೆಂದರೆ, ನಿಮಗೆ ದುಃಖವಾಗಬೇಕೆಂದಲ್ಲ, ನಿಮ್ಮ ಮೇಲೆ ನನಗಿರುವ ಅಧಿಕವಾದ ಪ್ರೀತಿಯನ್ನು ನೀವು ತಿಳಿದುಕೊಳ್ಳಬೇಕೆಂತಲೇ ನಾನು ಮಹಾ ದುಃಖದಿಂದಲೂ ಬಹಳ ಕಣ್ಣೀರಿನಿಂದಲೂ ಹೃದಯದ ವೇದನೆಯಿಂದಲೂ ನಿಮಗೆ ಬರೆದೆನು.</verse>
				<verse number="5">ನಿಮ್ಮಲ್ಲಿ ಯಾರಾದರೂ ನನ್ನನ್ನು ದುಃಖಪಡಿಸಿದರೆ, ಅವನು ನನ್ನನ್ನು ಮಾತ್ರವೇ ದುಃಖ ಪಡಿಸದೆ, ಒಂದು ವಿಧದಲ್ಲಿ ನಿಮ್ಮೆಲ್ಲರನ್ನೂ ದುಃಖಪಡಿಸಿದ್ದಾನೆ. ಅವನ ಮೇಲೆ ಬಹಳ ಕಠಿಣನಾಗಿರಲು ನನಗೆ ಇಷ್ಟವಿಲ್ಲ.</verse>
				<verse number="6">ಅವನಿಗೆ ನಿಮ್ಮಲ್ಲಿ ಅನೇಕರಿಂದ ಉಂಟಾದ ಶಿಕ್ಷೆಯೇ ಸಾಕು.</verse>
				<verse number="7">ಈಗ ಅವನನ್ನು ನೀವು ಕ್ಷಮಿಸಿ ಸಂತೈಸಿರಿ. ಇಲ್ಲವಾದರೆ, ಅವನು ದುಃಖದಲ್ಲಿ ಮುಳುಗಿ ಹೋದಾನು.</verse>
				<verse number="8">ಅದಕ್ಕಾಗಿ ನೀವು ನಿಮ್ಮ ಪ್ರೀತಿಯನ್ನು ಮೊದಲು ಇದ್ದಂತೆ ಈಗಲೂ ಅವನ ಮೇಲೆ ತೋರಿಸಿರಿ ಎಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.</verse>
				<verse number="9">ಎಲ್ಲಾ ವಿಷಯಗಳಲ್ಲಿ ನೀವು ವಿಧೇಯರಾಗುತ್ತೀರೋ ಏನೋ ಎಂದು ಪರೀಕ್ಷಿಸಿ ಅರಿತುಕೊಳ್ಳಬೇಕೆಂಬ ಕಾರಣಕ್ಕಾಗಿ ನಾನು ನಿಮಗೆ ಹಾಗೆ ಬರೆದನು.</verse>
				<verse number="10">ನೀವು ಯಾರನ್ನಾದರೂ ಕ್ಷಮಿಸಿದರೆ, ನಾನು ಅವರನ್ನು ಕ್ಷಮಿಸುವೆನು. ನಾನು ಯಾರನ್ನಾದರೂ ಕ್ಷಮಿಸಿದರೆ, ನಿಮ್ಮ ನಿಮಿತ್ತವಾಗಿಯೇ ಕ್ರಿಸ್ತ ಯೇಸುವಿನ ಸನ್ನಿಧಾನದಲ್ಲಿ ಕ್ಷಮಿಸುವೆನು.</verse>
				<verse number="11">ಸೈತಾನನು ನಮ್ಮನ್ನು ವಂಚಿಸಲು ಅವಕಾಶ ಕೊಡಬಾರದು. ಅವನ ಕುತಂತ್ರಗಳನ್ನು ನಾವು ಅರಿತವರಲ್ಲವೇ?</verse>
				<verse number="12">ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದಕ್ಕೆ ನಾನು ತ್ರೋವಕ್ಕೆ ಹೋದಾಗ, ಅಲ್ಲಿ ಕರ್ತ ಯೇಸುವು ನನಗೆ ಬಾಗಿಲು ತೆರೆದಿರುವುದನ್ನು ಕಂಡೆನು.</verse>
				<verse number="13">ನನ್ನ ಸಹೋದರನಾದ ತೀತನು ನನಗೆ ಅಲ್ಲಿ ಸಿಗದಿದ್ದ ಕಾರಣ, ನನ್ನ ಆತ್ಮಕ್ಕೆ ಇನ್ನೂ ವಿಶ್ರಾಂತಿಯಿರಲಿಲ್ಲ. ಆದ್ದರಿಂದ ತ್ರೋವದವರಿಗೆ ನಾನು ನನ್ನ ವಂದನೆಗಳನ್ನರ್ಪಿಸಿ ಮಕೆದೋನ್ಯ ಪ್ರಾಂತಕ್ಕೆ ಹೋದೆನು.</verse>
				<verse number="14">ಕ್ರಿಸ್ತ ಯೇಸುವಿನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರೆಸುತ್ತಾ, ಅವರ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ಪ್ರಸಾರಗೊಳಿಸುವ ದೇವರಿಗೆ ಕೃತಜ್ಞತೆಗಳು.</verse>
				<verse number="15">ರಕ್ಷಣಾ ಮಾರ್ಗದಲ್ಲಿರುವವರಿಗೂ ನಾಶದ ಮಾರ್ಗದಲ್ಲಿರುವವರಿಗೂ ನಾವು ದೇವರಿಗೆ ಕ್ರಿಸ್ತ ಯೇಸುವಿನ ಪರಿಮಳವಾಗಿದ್ದೇವೆ.</verse>
				<verse number="16">ಕೆಲವರಿಗೆ ನಾವು ಮರಣದ ವಾಸನೆಯಾಗಿದ್ದೇವೆ. ಇತರರಿಗೆ ಜೀವವನ್ನು ಹುಟ್ಟಿಸುವ ವಾಸನೆಯಾಗಿರುತ್ತೇವೆ. ಇಂಥ ಸೇವೆಗೆ ಸಮರ್ಥರು ಯಾರು?</verse>
				<verse number="17">ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ, ಅದರಿಂದ ಹಣಗಳಿಸುತ್ತಾರೆ. ನಾವಾದರೋ ಹಾಗೆ ಮಾಡುವವರಲ್ಲ. ನಾವು ದೇವರಿಂದ ಕಳುಹಿಸಲಾದವರಾಗಿ ಕ್ರಿಸ್ತ ಯೇಸುವಿನಲ್ಲಿದ್ದುಕೊಂಡು ದೇವರ ಮುಂದೆ ಯಥಾರ್ಥವಾಗಿ ಮಾತನಾಡುತ್ತೇವೆ.</verse>
			</chapter>
			<chapter number="3">
				<verse number="1">ನಮ್ಮನ್ನು ನಾವೇ ತಿರುಗಿ ಶಿಫಾರಸ್ಸು ಮಾಡಿಕೊಳ್ಳುವುದಕ್ಕೆ ಪ್ರಾರಂಭಿಸುತ್ತೇವೋ? ಬೇರೆಯವರಂತೆ ನಿಮಗೆ ತೋರಿಸುವುದಕ್ಕೆ ಯೋಗ್ಯತಾಪತ್ರವು ಬೇಕೋ ಅಥವಾ ನಿಮ್ಮಿಂದ ನಮಗೆ ಯೋಗ್ಯತಾಪತ್ರವು ಬೇಕಾಗಿದೆಯೋ?</verse>
				<verse number="2">ನೀವೇ ನಮ್ಮ ಹೃದಯದ ಮೇಲೆ ಎಲ್ಲರೂ ಓದಿ ತಿಳಿದುಕೊಳ್ಳಬಹುದಾದ ಪತ್ರವಾಗಿರುತ್ತೀರಿ.</verse>
				<verse number="3">ನಮ್ಮ ಸುವಾರ್ತಾ ಸೇವೆಯ ಫಲಿತಾಂಶವಾಗಿ, ನೀವು ಕ್ರಿಸ್ತ ಯೇಸುವಿನ ಪತ್ರವೆಂದು ಪ್ರಕಟಿಸುತ್ತಿದ್ದೀರಿ ಎಂಬುದು ಸ್ಪಷ್ಟವಾಗಿದೆ. ಆ ಪತ್ರವು ಮಸಿಯಿಂದ ಬರೆದದ್ದಲ್ಲ, ಜೀವವುಳ್ಳ ದೇವರ ಆತ್ಮನಿಂದಲೇ ಬರೆಯಲಾಗಿದೆ, ಕಲ್ಲಿನ ಹಲಗೆಗಳ ಮೇಲೆಯಲ್ಲ, ಮಾನವ ಹೃದಯಗಳೆಂಬ ಹಲಗೆಗಳ ಮೇಲೆ ಬರೆಯಲಾಗಿದೆ.</verse>
				<verse number="4">ಕ್ರಿಸ್ತ ಯೇಸುವಿನ ಮೂಲಕ ದೇವರ ಮುಂದೆ ನಮಗೆ ಅಂಥಾ ಭರವಸೆಯು ಇರುವುದರಿಂದ ನಾವು ಹಾಗೆ ಹೇಳುತ್ತಿದ್ದೇವೆ.</verse>
				<verse number="5">ನಮ್ಮಿಂದಲೇ ಉಂಟಾಯಿತು ಎಂದು ಹೇಳಿಕೊಳ್ಳುವುದಕ್ಕೆ ನಮಗೆ ಯಾವ ಸಾಮರ್ಥ್ಯವೂ ಇಲ್ಲ. ನಮ್ಮ ಸಾಮರ್ಥ್ಯವು ದೇವರಿಂದಲೇ ಬರುತ್ತದೆ.</verse>
				<verse number="6">ದೇವರು ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂತೆ ಸಾಮರ್ಥ್ಯವನ್ನು ನೀಡಿರುತ್ತಾರೆ. ಇದು ಲಿಖಿತ ನಿಯಮಕ್ಕೆ ಸೇರಿದ್ದಾಗಿರದೆ, ಪವಿತ್ರಾತ್ಮನ ನಿಯಮದ ಸೇವೆಯಾಗಿರುತ್ತದೆ. ಏಕೆಂದರೆ, ಲಿಖಿತವಾದದ್ದು ಮರಣವನ್ನುಂಟುಮಾಡುತ್ತದೆ. ದೇವರಾತ್ಮನಿಂದಾದದ್ದು ಜೀವವನ್ನು ಉಂಟುಮಾಡುತ್ತದೆ.</verse>
				<verse number="7">ಕಲ್ಲಿನ ಮೇಲೆ ಅಕ್ಷರಗಳನ್ನು ಕೆತ್ತಿಸಿದ್ದೂ, ಮರಣವನ್ನುಂಟುಮಾಡುವಂಥದ್ದೂ ಆಗಿರುವ ಆ ಸೇವೆಯು ಮಹಿಮೆಯಿಂದ ಕೂಡಿದ್ದಾಗಿತ್ತು. ಕುಂದಿಹೋಗುವಂಥ ಆ ಮಹಿಮೆಯಿಂದ ತುಂಬಿದ ಮೋಶೆಯ ಮುಖವನ್ನು ಇಸ್ರಾಯೇಲರಿಗೆ ದಿಟ್ಟಿಸಿ ನೋಡಲು ಸಾಧ್ಯವಾಗಲಿಲ್ಲ.</verse>
				<verse number="8">ಆದರೆ ಪವಿತ್ರಾತ್ಮ ದೇವರಿಂದ ಜೀವವನ್ನು ಉಂಟುಮಾಡುವ ಸೇವೆಯು ಎಷ್ಟೋ ಹೆಚ್ಚಾಗಿ ಮಹಿಮೆಯುಳ್ಳದ್ದಾಗಿರಬೇಕು?</verse>
				<verse number="9">ಮನುಷ್ಯರನ್ನು ದಂಡನಾ ತೀರ್ಪಿಗೆ ಒಳಪಡಿಸುವಂಥ ಸೇವೆಯೇ ಮಹಿಮೆಯುಳ್ಳದ್ದಾಗಿದ್ದರೆ, ನೀತಿವಂತರೆಂದು ನಿರ್ಣಯಿಸುವ ಸೇವೆಯು ಇನ್ನೆಷ್ಟು ಮಹಿಮೆಯುಳ್ಳದ್ದಾಗಿರಬೇಕು!</verse>
				<verse number="10">ಈ ಸೇವೆಯ ಅಪರಿಮಿತ ಮಹಿಮೆಯ ಮುಂದೆ, ಹಿಂದಿನ ಆ ಶಾಸನದ ಮಹಿಮೆಯು ಇಲ್ಲದಂತಾಗಿದೆ.</verse>
				<verse number="11">ಇಲ್ಲದೆ ಹೋಗುವಂಥದ್ದು ಮಹಿಮೆಯುಳ್ಳದ್ದಾಗಿದ್ದಲ್ಲಿ, ನಿತ್ಯವಾಗಿರುವಂಥದ್ದು ಇನ್ನು ಹೆಚ್ಚಾದ ಮಹಿಮೆಯಲ್ಲಿರಬೇಕಲ್ಲವೇ?</verse>
				<verse number="12">ಇಂಥಾ ನಿರೀಕ್ಷೆಯು ನಮಗಿರುವುದರಿಂದ ನಾವು ಬಹಳ ಧೈರ್ಯಶಾಲಿಗಳಾಗಿದ್ದೇವೆ.</verse>
				<verse number="13">ತನ್ನ ಮುಖದಲ್ಲಿರುವ ಮಹಿಮೆಯು ಕುಂದಿ ಹೋಗುತ್ತಿರುವುದನ್ನು ಇಸ್ರಾಯೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕು ಹಾಕಿಕೊಂಡನು. ನಾವು ಮೋಶೆಯಂತೆ ಮಾಡುವವರಲ್ಲ.</verse>
				<verse number="14">ಆದರೆ ಇಸ್ರಾಯೇಲರ ಬುದ್ಧಿ ಮಂದವಾಯಿತು. ಈ ದಿನದವರೆಗೂ ಹಳೆಯ ಒಡಂಬಡಿಕೆಯು ಓದುವಾಗಲೆಲ್ಲಾ, ಅದೇ ಮುಸುಕು ಅವರಲ್ಲಿ ಇರುತ್ತದೆ. ಅದು ಕ್ರಿಸ್ತ ಯೇಸುವಿನಲ್ಲಿ ಮಾತ್ರವೇ ತೆಗೆಯಲು ಸಾಧ್ಯ. ಆದ್ದರಿಂದ ಅದು ಈಗಲೂ ತೆಗೆದುಹಾಕಲಾಗಿಲ್ಲ.</verse>
				<verse number="15">ಈ ದಿನದ ತನಕವೂ ಮೋಶೆಯ ಗ್ರಂಥವು ಓದುಗುವಾಗಲೆಲ್ಲಾ, ಅವರ ಹೃದಯಕ್ಕೆ ಮುಸುಕು ಹಾಕಲಾಗಿರುತ್ತದೆ.</verse>
				<verse number="16">ಆದರೆ ಯಾರಾದರೂ ಕರ್ತ ಯೇಸುವಿನ ಕಡೆಗೆ ತಿರುಗಿದಾಗೆಲ್ಲಾ, ಆ ಮುಸುಕು ಅವರಿಂದ ತೆಗೆಯಲಾಗುತ್ತದೆ.</verse>
				<verse number="17">ಕರ್ತದೇವರೇ ಆತ್ಮರಾಗಿದ್ದಾರೆ. “ಕರ್ತದೇವರ ಆತ್ಮವು ಎಲ್ಲಿರುತ್ತದೋ ಅಲ್ಲಿ ಸ್ವಾತಂತ್ರ್ಯವಿರುವುದು.”</verse>
				<verse number="18">ಹಾಗೆಯೇ, ನಾವು ಮುಸುಕಿಲ್ಲದ ನಮ್ಮ ಮುಖದಲ್ಲಿ ಕರ್ತದೇವರ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಹೀಗೆ ನಾವು ಮಹಿಮೆಯಿಂದ ಅಧಿಕ ಮಹಿಮೆಗೆ ಸಾಗಿ ಅವರ ಸಾರೂಪ್ಯಕ್ಕೆ ಅನುಸಾರವಾಗಿ ನಾವು ರೂಪಾಂತರವಾಗುತ್ತಿದ್ದೇವೆ. ಈ ರೂಪಾಂತರವು ದೇವರಾತ್ಮನಾಗಿರುವ ಕರ್ತನಿಂದಲೇ.</verse>
			</chapter>
			<chapter number="4">
				<verse number="1">ದೇವರ ಕರುಣೆಯ ನಿಮಿತ್ತ ನಾವು ಈ ಸೇವೆಯನ್ನು ಹೊಂದಿರುವುದರಿಂದ ನಾವು ಧೈರ್ಯಗೆಡುವವರಲ್ಲ.</verse>
				<verse number="2">ನಾವು ನಾಚಿಕೆಯ ಗುಪ್ತ ಕಾರ್ಯಗಳನ್ನು ಬಿಟ್ಟುಬಿಟ್ಟು, ಕುತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯಗಳನ್ನು ವ್ಯಾಖ್ಯಾನ ಮಾಡದೆಯೂ ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತಾ, ಎಲ್ಲಾ ಮನುಷ್ಯರ ಮನಸ್ಸಾಕ್ಷಿಯು ಒಪ್ಪಬೇಕಾದ ರೀತಿಯಲ್ಲಿ ನಮ್ಮನ್ನು ನಾವೇ ದೇವರ ಮುಂದೆ ಸಮರ್ಪಿಸಿಕೊಳ್ಳುತ್ತೇವೆ.</verse>
				<verse number="3">ನಾವು ಪ್ರಚಾರ ಮಾಡುವ ಸುವಾರ್ತೆಯು ಮುಸುಕು ಹಾಕಿರುವುದಾದರೆ, ಅದು ನಾಶದ ಮಾರ್ಗದಲ್ಲಿರುವವರಿಗೆ ಮಾತ್ರ.</verse>
				<verse number="4">ಈ ಲೋಕದ ದೇವರು ನಂಬದವರ ಮನಸ್ಸನ್ನು ಕುರುಡುಮಾಡಿರುತ್ತಾನೆ. ಆದ್ದರಿಂದ ದೇವರ ಸ್ವರೂಪವಾಗಿರುವ ಕ್ರಿಸ್ತ ಯೇಸುವಿನ ಸುವಾರ್ತೆಯ ಮಹಿಮೆಯ ಬೆಳಕನ್ನು ಅವರು ಕಾಣಲಾರರು.</verse>
				<verse number="5">ನಾವು ನಮ್ಮ ಬಗ್ಗೆಯೇ ಪ್ರಚಾರ ಮಾಡುವುದಿಲ್ಲ. ಆದರೆ ಕ್ರಿಸ್ತ ಯೇಸು ಕರ್ತ ದೇವರೆಂದೂ ನಾವು ಯೇಸುವಿಗಾಗಿ ನಿಮ್ಮ ಸೇವಕರಾಗಿದ್ದೇವೆ ಎಂದೂ ಪ್ರಚುರಪಡಿಸುತ್ತೇವೆ.</verse>
				<verse number="6">“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.</verse>
				<verse number="7">ಆದರೆ ಸರ್ವೋನ್ನತವಾದ ಈ ಶಕ್ತಿಯೂ ನಮ್ಮಿಂದಲ್ಲ ದೇವರಿಂದಲೇ ಬಂದಿರುತ್ತದೆ ಎಂಬುದನ್ನು ತೋರಿಸುವಂತೆ ಮಣ್ಣಿನ ಮಡಕೆಗಳಾದ ನಮ್ಮಲ್ಲಿ ನಿಕ್ಷೇಪವಿದೆ.</verse>
				<verse number="8">ಸರ್ವವಿಧದಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಜಜ್ಜಿಹೋಗಲಿಲ್ಲ, ನಾವು ಚಂಚಲರಾಗಿದ್ದರೂ ನಿರಾಶರಾಗಲಿಲ್ಲ.</verse>
				<verse number="9">ಹಿಂಸೆಗೆ ಒಳಪಟ್ಟರೂ ಕೈಬಿಟ್ಟವವರಲ್ಲ, ದಬ್ಬಿದವರಾದಾಗ್ಯೂ ನಾಶವಾಗಲಿಲ್ಲ.</verse>
				<verse number="10">ಯೇಸುವಿನ ಜೀವವು ನಮ್ಮ ಶರೀರದಲ್ಲಿ ಪ್ರಕಟವಾಗುವಂತೆ, ನಾವು ಯಾವಾಗಲೂ ನಮ್ಮ ಶರೀರದಲ್ಲಿ ಯೇಸುವಿನ ಮರಣವನ್ನು ಧರಿಸುವವರಾಗಿರುತ್ತೇವೆ.</verse>
				<verse number="11">ಏಕೆಂದರೆ ಜೀವಂತವಾಗಿರುವ ನಾವು ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಪ್ರಕಟಿಸುವಂತೆ, ನಮ್ಮನ್ನು ಯಾವಾಗಲೂ ಯೇಸುವಿಗಾಗಿ ಮರಣಕ್ಕೆ ಒಪ್ಪಿಸಿಕೊಟ್ಟವರಾಗಿದ್ದೇವೆ.</verse>
				<verse number="12">ಹೀಗಿರುವುದರಿಂದ, ನಮ್ಮೊಳಗೆ ಮರಣವು ಕಾರ್ಯ ಮಾಡುತ್ತದೆ, ಆದರೆ ನಿಮ್ಮೊಳಗೆ ಜೀವವು ಕಾರ್ಯ ಮಾಡುತ್ತದೆ.</verse>
				<verse number="13">“ನಾನು ನಂಬಿದೆನು, ಆದ್ದರಿಂದ ಮಾತನಾಡುವೆನು,” ಎಂದು ಪವಿತ್ರ ವೇದದಲ್ಲಿ ಬರೆಯಲಾಗಿದೆ. ಅದೇ ನಂಬಿಕೆಯ ಆತ್ಮವನ್ನು ಹೊಂದಿದವರಾದ ನಾವು ಕೂಡಾ ನಂಬಿದ್ದೇವೆ, ಆದ್ದರಿಂದ ನಾವು ಮಾತನಾಡುತ್ತೇವೆ.</verse>
				<verse number="14">ಏಕೆಂದರೆ, ಕರ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರೇ, ನಮ್ಮನ್ನೂ ಸಹ ಯೇಸುವಿನೊಂದಿಗೆ ಎಬ್ಬಿಸಿ, ನಿಮ್ಮ ಜೊತೆಯಲ್ಲಿಯೂ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.</verse>
				<verse number="15">ಇವೆಲ್ಲವೂ ನಿಮ್ಮ ಒಳ್ಳೆಯದಕ್ಕಾಗಿಯೇ. ಇದರಿಂದ ಹೆಚ್ಚಾದ ಜನರಿಗೆ ತಲುಪುತ್ತಿರುವ ಕೃಪೆಯು, ಕೃತಜ್ಞತೆಯಿಂದ ತುಂಬಿ ಹರಿಯುವುದು. ಆಗ ದೇವರ ಮಹಿಮೆಯು ಸ್ಪಷ್ಟವಾಗುವುದು.</verse>
				<verse number="16">ಆದ್ದರಿಂದ ನಾವು ಅಧೈರ್ಯಪಡುವುದಿಲ್ಲ. ನಮ್ಮ ಹೊರಗಿನ ಮನುಷ್ಯ ಕ್ಷಯಿಸುತ್ತಿದ್ದರೂ ನಮ್ಮ ಆಂತರ್ಯ ಮನುಷ್ಯ ಅನುದಿನವೂ ನೂತನವಾಗುತ್ತಿದೆ.</verse>
				<verse number="17">ಹಗುರವಾಗಿಯೂ ಕ್ಷಣಿಕವಾಗಿಯೂ ಇರುವ ನಮ್ಮ ಸಂಕಟವು ಅತ್ಯಂತ ಘನತೆಯುಳ್ಳ ನಿತ್ಯ ಮಹಿಮೆಯನ್ನು ನಮಗೆ ದೊರಕಿಸಿಕೊಡುವುದು.</verse>
				<verse number="18">ಆದ್ದರಿಂದ ನಮ್ಮ ದೃಷ್ಟಿಯು ದೃಶ್ಯ ಸಂಗತಿಗಳ ಮೇಲಿರದೆ, ಅದೃಶ್ಯವಾದವುಗಳ ಮೇಲೆ ಇವೆ. ಕಾಣುವವುಗಳು ತಾತ್ಕಾಲಿಕವಾದವುಗಳು. ಆದರೆ ಕಾಣದಿರುವಂಥದ್ದು ನಿತ್ಯವಾಗಿರುವುದು.</verse>
			</chapter>
			<chapter number="5">
				<verse number="1">ನಾವು ಜೀವಿಸುತ್ತಿರುವ ನಮ್ಮ ದೇಹವೆಂಬ ಗುಡಾರವು ನಾಶವಾಗಿ ಹೋದರೂ, ಪರಲೋಕದಲ್ಲಿ ಶಾಶ್ವತವಾದ ನಿವಾಸವು ನಮಗೆ ಉಂಟೆಂದು ಬಲ್ಲೆವು. ಅದು ಮಾನವರ ಕೈಯಿಂದ ಕಟ್ಟಿದ ನಿವಾಸವಲ್ಲ, ದೇವರಿಂದಲೇ ನಿರ್ಮಿತವಾದದ್ದಾಗಿದೆ.</verse>
				<verse number="2">ನಮ್ಮ ಪರಲೋಕದ ನಿವಾಸವನ್ನು ನೀವೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸಿ, ಈ ಜೀವನದಲ್ಲಿ ನರಳುತ್ತಿದ್ದೇವೆ.</verse>
				<verse number="3">ಏಕೆಂದರೆ, ನಾವು ಪರಲೋಕದ ನಿವಾಸವನ್ನು ಧರಿಸಿಕೊಂಡಾಗ, ಆತ್ಮವಿಲ್ಲದ ದೇಹವಾಗಿ ನಾವು ಇರುವುದಿಲ್ಲ.</verse>
				<verse number="4">ನಾವು ಈ ದೇಹವೆಂಬ ಗುಡಾರದಲ್ಲಿರುವ ತನಕ ನರಳುತ್ತೇವೆ, ಭಾರದಿಂದ ಬಳಲುತ್ತೇವೆ. ಈ ಗುಡಾರವೆಂಬ ಹಳೆಯ ಶರೀರವು ನಮ್ಮಿಂದ ಕಳಚಿ ಹೋಗಬೇಕೆಂಬುದು ನಮ್ಮ ಇಷ್ಟವಲ್ಲ. ಆದರೆ ಪರಲೋಕದ ನಿವಾಸವೆಂಬ ನೂತನ ಶರೀರವನ್ನು ನಾವು ಧರಿಸಿಕೊಳ್ಳಲು ಬಯಸುತ್ತೇವೆ. ಏಕೆಂದರೆ ನಶ್ವರವಾದ ಈ ನಮ್ಮ ದೇಹವು ಅಮರತ್ವವನ್ನು ಧರಿಸಿಕೊಳ್ಳಬೇಕು.</verse>
				<verse number="5">ಈ ಉದ್ದೇಶಕ್ಕಾಗಿಯೇ ನಮ್ಮನ್ನು ಸಿದ್ಧಮಾಡಿದ ದೇವರು, ಮುಂಬರುವುದರ ಖಾತರಿಯಾಗಿ ನಮಗೆ ತಮ್ಮ ಆತ್ಮವನ್ನೇ ಕೊಟ್ಟಿದ್ದಾರೆ.</verse>
				<verse number="6">ಹೀಗಿರುವುದರಿಂದ ಶರೀರದಲ್ಲಿ ವಾಸಿಸುವವರೆಗೂ ನಾವು ಕರ್ತನಿಂದ ದೂರವಾಗಿದ್ದೇವೆಂದು ತಿಳಿದು, ನಾವು ಯಾವಾಗಲೂ ಭರವಸೆ ಉಳ್ಳವರಾಗಿದ್ದೇವೆ.</verse>
				<verse number="7">ನಾವು ನೋಡುವವರಾಗಿ ಜೀವಿಸದೆ, ನಂಬುವವರಾಗಿ ಜೀವಿಸುತ್ತಿದ್ದೇವೆ.</verse>
				<verse number="8">ನಮ್ಮ ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವುದು ಉತ್ತಮವೆಂದು ಆಶಿಸಿ, ಅದರಲ್ಲಿ ಭರವಸೆ ಉಳ್ಳವರಾಗಿರುತ್ತೇವೆ.</verse>
				<verse number="9">ಆದ್ದರಿಂದ ನಾವು ದೇಹದಲ್ಲಿದ್ದರೂ ಸರಿಯೇ, ಅದನ್ನು ಬಿಟ್ಟಿದ್ದರೂ ಸರಿಯೇ ಕರ್ತನನ್ನು ಮೆಚ್ಚಿಸಬೇಕೆಂಬುದೇ ನಮ್ಮ ಗುರಿಯಾಗಿದೆ.</verse>
				<verse number="10">ಏಕೆಂದರೆ, ನಾವೆಲ್ಲರೂ ನಮ್ಮ ದೇಹದ ಮೂಲಕ ನಡೆಸಿದ ಒಳ್ಳೆಯದಕ್ಕಾಗಲಿ, ಕೆಟ್ಟದ್ದಕ್ಕಾಗಲಿ ಸಿಗಬೇಕಾದ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿಕೊಳ್ಳಲೇಬೇಕು.</verse>
				<verse number="11">ಕರ್ತನ ಭಯಭಕ್ತಿಯನ್ನು ಅರಿತಿರುವ ಕಾರಣ, ಜನರ ಮನವೊಲಿಸಲು ನಾವು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲವರಾಗಿದ್ದಾರೆ. ಅದು ನಿಮ್ಮ ಮನಸ್ಸಾಕ್ಷಿಗೂ ತಿಳಿದಿದೆ ಎಂದು ನಾನು ನಂಬುತ್ತೇನೆ.</verse>
				<verse number="12">ಮತ್ತೊಮ್ಮೆ ನಮ್ಮನ್ನು ನಾವೇ ಹೊಗಳಿಕೊಳ್ಳುತ್ತೇವೆಂದು ನೀವು ಭಾವಿಸಬೇಡಿ. ನಮ್ಮನ್ನು ಕುರಿತು ನೀವು ಹೆಮ್ಮೆ ಪಡುವಂತೆ ಒಂದು ಅವಕಾಶವನ್ನು ನಾವು ನಿಮಗೆ ಒದಗಿಸುತ್ತೇವೆ ಅಷ್ಟೇ. ಹೀಗೆ ಮನುಷ್ಯರ ಹೃದಯವನ್ನಲ್ಲಾ, ಹೊರತೋರಿಕೆಯನ್ನು ಕಂಡು ಹೆಮ್ಮೆ ಪಡುವವರಿಗೆ ನೀವು ಉತ್ತರ ಕೊಡುವಿರಿ.</verse>
				<verse number="13">ನಮಗೆ ಬುದ್ಧಿ ಭ್ರಮಣೆಯಾಗಿದ್ದರೆ, ಅದು ದೇವರಿಗಾಗಿಯೇ. ನಾವು ಸ್ವಸ್ಥಬುದ್ಧಿಯುಳ್ಳವರಾಗಿದ್ದರೆ, ಅದು ನಿಮಗಾಗಿಯೇ.</verse>
				<verse number="14">ಕ್ರಿಸ್ತ ಯೇಸುವಿನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ. ಏಕೆಂದರೆ, ಎಲ್ಲರಿಗೋಸ್ಕರ ಕ್ರಿಸ್ತ ಯೇಸು ಸತ್ತದ್ದರಿಂದ, ಎಲ್ಲರೂ ಸತ್ತಂತಾಯಿತು.</verse>
				<verse number="15">ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ, ತಮಗಾಗಿ ಸತ್ತು ಪುನರುತ್ಥಾನವಾಗಿ ಬಂದ ಕ್ರಿಸ್ತ ಯೇಸುವಿಗೋಸ್ಕರವೇ ಜೀವಿಸಬೇಕೆಂದು ಕ್ರಿಸ್ತ ಯೇಸು ಎಲ್ಲರಿಗೋಸ್ಕರ ಸತ್ತರು.</verse>
				<verse number="16">ಇನ್ನು ಮೇಲೆ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವುದಿಲ್ಲ. ಒಂದು ಕಾಲದಲ್ಲಿ ಕ್ರಿಸ್ತ ಯೇಸುವನ್ನು ನಾವು ಶರೀರ ಸಂಬಂಧವಾಗಿ ಅರಿತಿದ್ದೆವು. ಆದರೆ ಇನ್ನು ಮುಂದೆ ಕ್ರಿಸ್ತ ಯೇಸುವನ್ನು ಶರೀರ ಸಂಬಂಧವಾಗಿ ನಾವು ಅರಿತುಕೊಳ್ಳುವುದಿಲ್ಲ.</verse>
				<verse number="17">ಆದ್ದರಿಂದ ಯಾರಾದರೂ ಕ್ರಿಸ್ತ ಯೇಸುವಿನಲ್ಲಿದ್ದರೆ, ಅವರು ನೂತನ ಸೃಷ್ಟಿಯಾಗಿದ್ದಾರೆ: ಹಳೆಯದೆಲ್ಲವೂ ಹೋಗಿ ಅವರಿಗೆ ಹೊಸ ಸೃಷ್ಟಿಯು ಬರುವುದು.</verse>
				<verse number="18">ಇವೆಲ್ಲವೂ ದೇವರಿಂದಲೇ ಆಯಿತು. ನಮ್ಮನ್ನು ಕ್ರಿಸ್ತ ಯೇಸುವಿನ ಮೂಲಕ ತಮ್ಮೊಂದಿಗೆ ಸಮಾಧಾನ ಮಾಡಿಕೊಂಡ ದೇವರು, ಇತರರನ್ನು ಸಮಾಧಾನಕ್ಕೆ ತರುವ ಸೇವೆಯನ್ನೂ ನಮಗೆ ಕೊಟ್ಟಿರುತ್ತಾರೆ:</verse>
				<verse number="19">ಹೇಗೆಂದರೆ, ದೇವರು ಮನುಷ್ಯರ ಪಾಪಗಳನ್ನು ಅವರಿಗೆ ವಿರೋಧವಾಗಿ ಲೆಕ್ಕಿಸದೆ, ಕ್ರಿಸ್ತ ಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಂದಿಗೆ ಸಮಾಧಾನಪಡಿಸುತ್ತಿದ್ದಾರೆ. ಈ ಸಮಾಧಾನದ ಸಂದೇಶವನ್ನೇ ದೇವರು ನಮಗೊಪ್ಪಿಸಿ ಕೊಟ್ಟಿದ್ದಾರೆ.</verse>
				<verse number="20">ಆದ್ದರಿಂದ ನಾವು ಕ್ರಿಸ್ತ ಯೇಸುವಿನ ರಾಯಭಾರಿಗಳಾಗಿದ್ದೇವೆ. ದೇವರೇ ನಮ್ಮ ಮೂಲಕ ನಿಮಗೆ ಕರೆ ನೀಡುತ್ತಾರೆ. ಆದ್ದರಿಂದ ಕ್ರಿಸ್ತ ಯೇಸುವಿನ ಪರವಾಗಿ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ: ದೇವರೊಡನೆ ಸಮಾಧಾನ ಮಾಡಿಕೊಳ್ಳಿರಿ.</verse>
				<verse number="21">ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪವನ್ನಾಗಿ ಮಾಡಿದರು. ಹೀಗೆ ಕ್ರಿಸ್ತ ಯೇಸುವಿನಲ್ಲಿ ದೇವರ ನೀತಿಯನ್ನಾಗಿ ದೇವರು ನಮ್ಮನ್ನು ಮಾಡಿದರು.</verse>
			</chapter>
			<chapter number="6">
				<verse number="1">ನೀವು ಹೊಂದಿರುವ ದೇವರ ಕೃಪೆಯನ್ನು ವ್ಯರ್ಥಮಾಡಿಕೊಳ್ಳಬೇಡಿರೆಂದು ದೇವರ ಜೊತೆಕೆಲಸದವರಾದ ನಾವು ನಿಮ್ಮಲ್ಲಿ ಬೇಡಿಕೊಳ್ಳುತ್ತೇವೆ,</verse>
				<verse number="2">ಏಕೆಂದರೆ ದೇವರು ಹೇಳಿದ ಹಾಗೆ, “ಪ್ರಸನ್ನತೆಯ ಕಾಲದಲ್ಲಿ ನಿನ್ನ ಪ್ರಾರ್ಥನೆಯನ್ನು ನಾನು ಲಾಲಿಸಿದೆನು. ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದೆನು,” ಇಗೋ, ಇದೇ ದೇವರ ಮೆಚ್ಚುಗೆಯ ಕಾಲ, ಈಗಲೇ ರಕ್ಷಣೆಯ ದಿನ.</verse>
				<verse number="3">ನಮ್ಮ ಸೇವೆಯು ಅಪವಾದಕ್ಕೆ ಗುರಿಯಾಗದಂತೆ ನಾವು ಯಾರಿಗೂ ಅಡ್ಡಿಯನ್ನು ಒಡ್ಡಲಿಲ್ಲ.</verse>
				<verse number="4">ಅದಕ್ಕೆ ಬದಲಾಗಿ, ಸರ್ವ ವಿಷಯಗಳಲ್ಲಿ ನಾವು ದೇವರ ಸೇವಕರಾಗಿದ್ದೇವೆಂದು ತೋರಿಸುತ್ತೇವೆ. ಕಷ್ಟ, ಸಂಕಟ ತೊಂದರೆಗಳಲ್ಲಿ ಮಹಾ ದೀರ್ಘತಾಳ್ಮೆಯನ್ನು ತೋರಿಸುತ್ತೇವೆ.</verse>
				<verse number="5">ನಾವು ಪೆಟ್ಟು ತಿಂದಿದ್ದೇವೆ, ಸೆರೆವಾಸವಾಗಿದ್ದೇವೆ, ಕಲಹಗಳನ್ನು ಅನುಭವಿಸಿದ್ದೇವೆ, ಶ್ರಮೆಪಟ್ಟು ದುಡಿದಿದ್ದೇವೆ, ರಾತ್ರಿಯಲ್ಲಿ ನಿದ್ರೆಗೆಟ್ಟಿದ್ದೇವೆ, ಊಟವಿಲ್ಲದೆ ಹಸಿದಿದ್ದೇವೆ,</verse>
				<verse number="6">ಪವಿತ್ರಾತ್ಮ ದೇವರ ಸಹಾಯದಿಂದ ಶುದ್ಧ ಮನಸ್ಸು, ತಿಳುವಳಿಕೆ, ಸಹನೆಯು ಮತ್ತು ದಯೆಯಿಂದಕೂಡಿ, ನಿಷ್ಕಪಟ ಪ್ರೀತಿಯಲ್ಲಿ ಜೀವಿಸಿದ್ದೇವೆ.</verse>
				<verse number="7">ಸತ್ಯಮಾತುಗಳಿಂದಲೂ, ದೇವರ ಶಕ್ತಿಯಿಂದಲೂ, ಎಡಬಲಗೈಗಳಲ್ಲಿ ನೀತಿಯ ಆಯುಧಗಳೂ</verse>
				<verse number="8">ಮಾನ ಅವಮಾನಗಳಿಂದಲೂ ಕೀರ್ತಿ ಅಪಕೀರ್ತಿಗಳಿಂದಲೂ ಸತ್ಯವಂತರಾಗಿದ್ದರೂ ಮೋಸಗಾರರೂ ಎಂದೆಣಿಸಿಕೊಂಡವರಾಗಿದ್ದೇವೆ.</verse>
				<verse number="9">ಪ್ರಖ್ಯಾತರಾಗಿದ್ದರೂ ಅಪ್ರಖ್ಯಾತರಾಗಿದ್ದೇವೆ; ಸಾಯುತ್ತಿದ್ದರೂ ನಾವು ಜೀವಿಸುತ್ತಿದ್ದೇವೆ, ನಾವು ಪೆಟ್ಟು ತಿಂದಿದ್ದೇವೆ, ಕೊಲೆಗೆ ಗುರಿಯಾಗಲಿಲ್ಲ.</verse>
				<verse number="10">ದುಃಖ ಪಡುವವರಾಗಿದ್ದರೂ ಹರ್ಷಿಸುತ್ತಿದ್ದೆವು, ಬಡವರಾಗಿದ್ದಾಗಲೂ ಅನೇಕರನ್ನು ಐಶ್ವರ್ಯವಂತರನ್ನಾಗಿ ಮಾಡಿದೆವು, ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಾಗಿದ್ದೇವೆ.</verse>
				<verse number="11">ಕೊರಿಂಥದವರೇ, ನಾವು ನಿಮ್ಮೊಂದಿಗೆ ಮುಚ್ಚುಮರೆಯಿಲ್ಲದೆ ಹೇಳಿಕೊಂಡೆವು, ನಮ್ಮ ಹೃದಯವನ್ನು ನಿಮ್ಮೊಂದಿಗೆ ವಿಶಾಲವಾಗಿ ತೆರೆದಿದ್ದೇವೆ.</verse>
				<verse number="12">ನಿಮ್ಮ ಕಡೆಗಿರುವ ನಮ್ಮ ಪ್ರೀತಿಯನ್ನು ನಿಲ್ಲಿಸಲಿಲ್ಲ. ಆದರೆ ನೀವು ನಮಗೆ ತೋರಿಸಬೇಕಾದ ಪ್ರೀತಿಯನ್ನು ತೋರಿಸಲಿಲ್ಲ.</verse>
				<verse number="13">ಆದ್ದರಿಂದ ಮಕ್ಕಳಿಗೆ ಹೇಳುವ ರೀತಿಯಲ್ಲಿ ನಿಮಗೆ ಹೇಳುತ್ತಿದ್ದೇವೆ. ನಾವು ನಿಮ್ಮನ್ನು ಪೂರ್ಣಹೃದಯದಿಂದ ಪ್ರೀತಿಸಿದಂತೆ ನೀವೂ ಪೂರ್ಣಹೃದಯದಿಂದ ನಮ್ಮನ್ನು ಪ್ರೀತಿಸಿರಿ.</verse>
				<verse number="14">ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಲ್ಲದವರೊಂದಿಗೆ ಸೇರಿ ಒಂದಾಗಿ ಪಾಲುಗಾರರಾಗಬೇಡಿರಿ. ನೀತಿಗೂ ಅನೀತಿಗೂ ಸಮಾನವೆಲ್ಲಿ? ಅಥವಾ ಬೆಳಕಿಗೂ ಕತ್ತಲೆಗೂ ಅನ್ಯೋನ್ಯತೆಯೇನು?</verse>
				<verse number="15">ಕ್ರಿಸ್ತ ಯೇಸುವಿಗೂ ಪಿಶಾಚನಿಗೂ ಐಕ್ಯತೆಯೇನು? ಅಥವಾ ಕ್ರಿಸ್ತ ವಿಶ್ವಾಸಿಗೂ ಅವಿಶ್ವಾಸಿಗೂ ಹುದುವಾಗಿರುವುದೇನು?</verse>
				<verse number="16">ದೇವರ ಆಲಯಕ್ಕೂ ವಿಗ್ರಹಗಳಿಗೂ ಏನು ಒಪ್ಪಂದ? ನಾವು ಜೀವಿಸುವ ದೇವರ ಆಲಯವಾಗಿದ್ದೇವೆ. ದೇವರು ಹೀಗೆ ಹೇಳಿದ್ದಾರೆ: “ನಾನು ಅವರೊಂದಿಗೆ ವಾಸಿಸುವೆನು, ಅವರ ಮಧ್ಯದಲ್ಲಿ ತಿರುಗಾಡುವೆನು. ನಾನು ಅವರಿಗೆ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು.”</verse>
				<verse number="17">ಆದ್ದರಿಂದ, “ಅವರ ನಡುವೆಯಿಂದ ಹೊರಟುಬಂದು ಪ್ರತ್ಯೇಕವಾಗಿರಿ. ಅಶುದ್ಧವಾದ ಯಾವುದನ್ನೂ ಮುಟ್ಟದಿರಿ, ನಾನು ನಿಮ್ಮನ್ನು ಸ್ವೀಕರಿಸುವೆನು ಎಂದು ಕರ್ತದೇವರು ಹೇಳುತ್ತಾರೆ.”</verse>
				<verse number="18">ಇದಲ್ಲದೆ, “ನಾನು ನಿಮಗೆ ತಂದೆಯಾಗಿರುವೆನು. ನೀವು ನನಗೆ ಪುತ್ರಪುತ್ರಿಯರು ಆಗಿರುವಿರಿ,” ಎಂದು ಸರ್ವಶಕ್ತ ಆಗಿರುವ ಕರ್ತದೇವರು ಹೇಳುತ್ತಾರೆ.</verse>
			</chapter>
			<chapter number="7">
				<verse number="1">ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.</verse>
				<verse number="2">ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳ ಕೊಡಿರಿ. ನಾವು ಯಾರಿಗೂ ಅನ್ಯಾಯ ಮಾಡಲಿಲ್ಲ, ಯಾರಿಗೂ ನಾವು ಕೇಡು ಬಗೆಯಲಿಲ್ಲ, ನಾವು ಸ್ವಂತ ಲಾಭಕ್ಕಾಗಿ ಯಾರನ್ನೂ ದುಡಿಸಿಕೊಳ್ಳಲಿಲ್ಲ.</verse>
				<verse number="3">ನಿಮ್ಮ ಮೇಲೆ ತಪ್ಪು ಹೊರಿಸುವುದಕ್ಕಾಗಿ ನಾನು ಇದನ್ನು ನಿಮಗೆ ಹೇಳುತ್ತಿಲ್ಲ. ನಾವು ನಿಮ್ಮೊಂದಿಗೆ ಜೀವಿಸಿ, ಸಾಯುವಷ್ಟರ ಮಟ್ಟಿಗೆ ನಾವು ನಮ್ಮ ಹೃದಯದಾಳದಿಂದ ನಿಮ್ಮನ್ನು ಪ್ರೀತಿಸುತ್ತಿದ್ದೇವೆ ಎಂದು ನಾನು ಹಿಂದೆ ಹೇಳಲಿಲ್ಲವೇ?</verse>
				<verse number="4">ನಿಮ್ಮ ಮೇಲೆ ನನಗೆ ಪರಿಪೂರ್ಣ ಭರವಸೆ ಇದೆ. ನಿಮ್ಮ ಬಗ್ಗೆ ನಾನು ಹೆಮ್ಮೆಪಡುತ್ತೇನೆ. ನಾನು ಬಹಳವಾಗಿ ಪ್ರೋತ್ಸಾಹ ಹೊಂದಿ, ನಮಗೆ ಬಂದಿದ್ದ ಎಲ್ಲಾ ಸಂಕಟಗಳಲ್ಲಿ ನಾವು ನಿಮ್ಮಿಂದ ಮಿತಿಯಿಲ್ಲದಷ್ಟು ಆನಂದಪಡುತ್ತಿದ್ದೇನೆ.</verse>
				<verse number="5">ನಾವು ಮಕೆದೋನ್ಯಕ್ಕೆ ಬಂದಿದ್ದಾಗ ನಮ್ಮ ದೇಹಕ್ಕೆ ವಿಶ್ರಾಂತಿ ದೊರೆಯಲಿಲ್ಲ. ಎಲ್ಲಾ ವಿಧದಲ್ಲಿಯೂ ಒತ್ತಡಗಳು: ಹೊರಗೆ ಹೋರಾಟ, ಒಳಗೆ ಅಂಜಿಕೆ.</verse>
				<verse number="6">ಆದರೆ ಮನಗುಂದಿದವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದರು.</verse>
				<verse number="7">ತೀತನು ಬರುವುದರಿಂದ ಮಾತ್ರವಲ್ಲ, ನೀವು ಅವನನ್ನು ಸ್ವೀಕರಿಸಿ, ಆದರಣೆಗಳಿಂದ ಸತ್ಕರಿಸಿದ್ದನ್ನು ಕೇಳಿ ನಮಗೆ ಸಂತೋಷವಾಯಿತು. ನೀವು ನನಗಾಗಿ ಹಂಬಲಿಸುತ್ತಿರುವುದನ್ನೂ, ಚಿಂತಿಸುವುದನ್ನೂ, ನನ್ನ ಮೇಲೆ ನಿಮಗಿರುವ ಆಳವಾದ ಅನುಕಂಪವನ್ನೂ ನಾವು ತೀತನಿಂದ ಕೇಳಿದಾಗ, ನಾನು ಇನ್ನೂ ಅಧಿಕ ಆನಂದಪಟ್ಟೆನು.</verse>
				<verse number="8">ನಾನು ಬರೆದಿದ್ದ ಪತ್ರದಿಂದ ನಿಮಗೆ ದುಃಖವಾಗಿದ್ದಲ್ಲಿ, ನಾನು ಅದಕ್ಕೆ ಬೇಸರಪಡುವುದಿಲ್ಲ. ನನ್ನ ಪತ್ರದಿಂದ ನಿಮಗೆ ದುಃಖವಾಯಿತಲ್ಲಾ ಎಂದು ಸ್ವಲ್ಪಕಾಲ ನಾನು ನೊಂದುಕೊಂಡಿದ್ದರೂ,</verse>
				<verse number="9">ಈಗ ಸಂತೋಷಪಡುತ್ತೇನೆ. ನಿಮಗೆ ದುಃಖವಾಯಿತೆಂಬ ಕಾರಣಕ್ಕಾಗಿ ಅಲ್ಲ. ಆ ದುಃಖವು ನಿಮ್ಮನ್ನು ಪಶ್ಚಾತ್ತಾಪಕ್ಕೆ ನಡೆಸಿ, ನಿಮಗಾದ ದುಃಖವು ದೇವರ ಚಿತ್ತದಿಂದ ಆಗಿದ್ದರಿಂದ ನಮ್ಮಿಂದ ನಿಮಗೆ ನಷ್ಟವಾಗಲಿಲ್ಲ ಎಂಬುದಕ್ಕಾಗಿಯೂ ಈಗ ಸಂತೋಷಪಡುತ್ತೇನೆ.</verse>
				<verse number="10">ದೈವಿಕ ದುಃಖವು ಪಶ್ಚಾತ್ತಾಪವನ್ನು ತಂದು ರಕ್ಷಣೆಗೆ ನಡೆಸುತ್ತದೆ. ಆ ಪಶ್ಚಾತ್ತಾಪದಲ್ಲಿ ವಿಷಾಧವಿರುವುದಿಲ್ಲ. ಆದರೆ ಪ್ರಾಪಂಚಿಕ ದುಃಖವು ಮರಣಕ್ಕೆ ನಡೆಸುತ್ತದೆ.</verse>
				<verse number="11">ಈ ದೈವಿಕ ದುಃಖವು ನಿಮ್ಮಲ್ಲಿ ಏನು ಉಂಟುಮಾಡಿದೆ ಗಮನಿಸಿರಿ: ನಿಮ್ಮಲ್ಲಿ ಎಂಥಾ ಉತ್ಸಾಹ, ನಿರಪರಾಧಕ್ಕಾಗಿ ಎಂಥಾ ಪ್ರಯಾಸ, ಎಷ್ಟು ರೋಷ, ಎಷ್ಟು ಭಯ, ಎಷ್ಟು ಹಂಬಲ, ಎಷ್ಟು ಆಸಕ್ತಿ, ನ್ಯಾಯಕ್ಕಾಗಿ ಎಷ್ಟು ಆತುರ. ಪ್ರತಿಯೊಂದು ವಿಷಯದಲ್ಲಿಯೂ ನೀವು ನಿರ್ದೋಷಿಗಳೆಂದು ರುಜುಪಡಿಸುತ್ತೀರಿ.</verse>
				<verse number="12">ನಾನು ಆ ಪತ್ರ ನಿಮಗೆ ಬರೆದದ್ದು, ತಪ್ಪು ಮಾಡಿದವನಿಗೋಸ್ಕರವಾಗಿ ಅಲ್ಲ ಮತ್ತು ಆ ತಪ್ಪಿನಿಂದ ಹಾನಿಯಾದವರಿಗೋಸ್ಕರವಾಗಿಯೂ ಅಲ್ಲ, ನೀವು ನಮಗೆ ಎಷ್ಟು ನಿಷ್ಠೆಯುಳ್ಳವರು ಎಂದು ದೇವರ ಸನ್ನಿಧಿಯಲ್ಲಿ ನಿಮಗೆ ನೀವೇ ನೋಡುವಂತೆ ಬರೆದೆನು.</verse>
				<verse number="13">ಆದಕಾರಣ ಇವೆಲ್ಲವುಗಳಿಂದ ನಮಗೆ ಉತ್ತೇಜನವಾಯಿತು. ನಮಗೆ ಉತ್ತೇಜನವಾಗಿದ್ದು ಅಲ್ಲದೆ, ನಿಮ್ಮೆಲ್ಲರಿಂದ ತೀತನ ಆತ್ಮಕ್ಕೆ ಉಪಶಮನವಾದ ಕಾರಣ, ನಾವು ಅವನ ಸಂತೋಷಕ್ಕಾಗಿ ಇನ್ನಷ್ಟು ಆನಂದಿಸಿದೆವು.</verse>
				<verse number="14">ನಿಮ್ಮ ವಿಷಯವಾಗಿ ನಾನು ತೀತನ ಮುಂದೆ ಹೊಗಳಿದ್ದಕ್ಕೆ ನಾನು ಬೇಸರಪಡಬೇಕಾಗಿರಲಿಲ್ಲ. ನಾನು ನಿಮಗೆ ಹೇಳಿದ್ದೆಲ್ಲವೂ ಹೇಗೆ ಸತ್ಯವಾಗಿತ್ತೋ, ಹಾಗೆಯೇ ನಿಮ್ಮ ಬಗ್ಗೆ ನಾವು ತೀತನ ಬಗ್ಗೆ ಹೊಗಳಿದ್ದೆಲ್ಲವೂ ಸತ್ಯವಾದವು.</verse>
				<verse number="15">ನೀವು ತೀತನ ಮಾತುಗಳಿಗೆ ವಿಧೇಯರಾಗಿದ್ದುದ್ದನ್ನೂ ಅವನನ್ನು ಭಯಭಕ್ತಿಯಿಂದಲೂ ನಡುಗುವಿಕೆಯಿಂದಲೂ ಸ್ವೀಕರಿಸಿದ್ದನ್ನೂ, ಅವನು ಜ್ಞಾಪಕಕ್ಕೆ ತಂದುಕೊಂಡಾಗ, ನಿಮ್ಮನ್ನು ಅತ್ಯಧಿಕವಾಗಿ ಪ್ರೀತಿಸುವವನಾಗಿದ್ದಾನೆ.</verse>
				<verse number="16">ನಿಮ್ಮ ಮೇಲೆ ಸಂಪೂರ್ಣ ಭರವಸೆ ಇಡಬಹುದೆಂಬುದಕ್ಕಾಗಿ ನಾನು ಹರ್ಷಿಸುತ್ತೇನೆ.</verse>
			</chapter>
			<chapter number="8">
				<verse number="1">ಪ್ರಿಯರೇ, ಮಕೆದೋನ್ಯದಲ್ಲಿರುವ ಸಭೆಗಳಿಗೆ ದೇವರು ಕೊಟ್ಟಿರುವ ಕೃಪೆಯನ್ನು ಕುರಿತು ನೀವು ತಿಳಿದಿರಬೇಕೆಂದು ನಮ್ಮ ಅಪೇಕ್ಷೆ.</verse>
				<verse number="2">ಅವರು ಘೋರ ಹಿಂಸೆಯ ನಡುವೆಯಿದ್ದರೂ ಕಡುಬಡತನದಲ್ಲಿ ಬಳಲುತ್ತಿದ್ದರೂ ಅವರು ಬಹಳ ಸಂತೋಷದಿಂದ, ಉದಾರಮನಸ್ಸಿನಿಂದ ಕೊಡುವವರಾಗಿದ್ದಾರೆ.</verse>
				<verse number="3">ಅವರು ತಮಗೆ ಸಾಧ್ಯವಾದಷ್ಟು ಕೊಟ್ಟಿದ್ದಾರೆ. ಮಾತ್ರವಲ್ಲದೇ ತಮ್ಮ ಶಕ್ತಿ ಮೀರಿ ಕೊಟ್ಟಿದ್ದಾರೆ ಎಂಬುದಕ್ಕೆ ನಾನೇ ಸಾಕ್ಷಿಯಾಗಿದ್ದೇನೆ.</verse>
				<verse number="4">ದೇವಜನರಿಗೆ ಸಹಾಯಮಾಡಲು ಭಾಗಿಗಳಾಗುವ ಅವಕಾಶವನ್ನು ತಮಗೆ ಕೊಡಬೇಕೆಂದು ಅವರು ತಾವಾಗಿಯೇ ನಮ್ಮನ್ನು ಬಹಳವಾಗಿ ಕೇಳಿಕೊಂಡರು.</verse>
				<verse number="5">ಇವೆಲ್ಲವನ್ನೂ ನಾವು ನೆನಸಿದ್ದಕ್ಕಿಂತಲೂ ಅವರು ಹೆಚ್ಚಾಗಿಯೇ ಮಾಡಿದರು. ಹೇಗೆಂದರೆ ಮೊದಲು ಅವರು ತಮ್ಮನ್ನೇ ಕರ್ತ ಯೇಸುವಿಗೆ ಒಪ್ಪಿಸಿಕೊಟ್ಟರು. ಅನಂತರ ದೇವರ ಚಿತ್ತಾನುಸಾರವಾಗಿ ತಮ್ಮನ್ನು ನಮಗೂ ಒಪ್ಪಿಸಿಕೊಟ್ಟರು.</verse>
				<verse number="6">ಹೀಗಿರಲಾಗಿ, ತೀತನು ಪ್ರಾರಂಭಿಸಿದ ಈ ದಾನ ಕಾರ್ಯವನ್ನು ನಿಮ್ಮಲ್ಲಿ ಸಹ ಪೂರ್ಣಗೊಳಿಸಬೇಕೆಂದು ನಾವು ಅವನನ್ನು ಬಹಳವಾಗಿ ಕೇಳಿಕೊಂಡೆವು.</verse>
				<verse number="7">ಹೇಗೆ ನೀವು ವಿಶ್ವಾಸ, ವಾಕ್ಚಾತುರ್ಯ, ತಿಳುವಳಿಕೆ, ಉತ್ಸಾಹ ಹಾಗೂ ನಮ್ಮ ಮೇಲೆ ನಿಮಗಿರುವ ಪ್ರೀತಿ, ಇವೆಲ್ಲವುಗಳಲ್ಲಿ ನೀವು ಸಮೃದ್ಧರಾಗಿದ್ದಂತೆ, ಈ ದಾನವೆಂಬ ಕೃಪಾಕಾರ್ಯದಲ್ಲಿಯೂ ಸಮೃದ್ಧರಾಗಿರಿ.</verse>
				<verse number="8">ಇದು ನಿಮಗೆ ನನ್ನ ಆಜ್ಞೆಯಲ್ಲ. ಆದರೆ ಇತರರಿಗೆ ನಿಮಗಿರುವ ಈ ಸೇವಾಕಾರ್ಯದ ಉತ್ಸಾಹವನ್ನೂ ನಮ್ಮ ಮೇಲಿರುವ ನಿಮ್ಮ ಪ್ರೀತಿಯು ಎಷ್ಟು ಯಥಾರ್ಥವಾಗಿದೆಯೆಂಬುದನ್ನೂ ಹೋಲಿಕೆಮಾಡಿ ಪರೀಕ್ಷಿಸಿನೋಡಲು ಬಯಸುತ್ತಿದ್ದೇನೆ.</verse>
				<verse number="9">ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯನ್ನು ನೀವು ಬಲ್ಲವರಾಗಿದ್ದೀರಿ. ಅವರು ಐಶ್ವರ್ಯವಂತರಾಗಿದ್ದರೂ ತಮ್ಮ ಬಡತನದ ಮೂಲಕ ನೀವು ಐಶ್ವರ್ಯವಂತರಾಗುವಂತೆ ಅವರು ನಿಮಗೋಸ್ಕರ ಬಡವರಾದರು.</verse>
				<verse number="10">ಈ ವಿಷಯದಲ್ಲಿ ನನ್ನ ಸಲಹೆ ಏನೆಂದರೆ, ಕಳೆದ ವರ್ಷದಲ್ಲಿ ಮೊದಲು ನೀವೇ ಈ ಕಾರ್ಯವನ್ನು ಪ್ರಾರಂಭಿಸಿದ್ದಲ್ಲದೇ ಇದನ್ನು ಮಾಡಬೇಕೆಂದು ಬಯಸಿದ್ದೀರಿ.</verse>
				<verse number="11">ಆದ್ದರಿಂದ ನೀವು ಎಷ್ಟು ಆಸಕ್ತರಾಗಿ ಪ್ರಾರಂಭಿಸಿದ್ದೀರೋ, ಅಷ್ಟೇ ಆಸಕ್ತಿಯಿಂದ ಅದನ್ನು ಮುಗಿಸಿರಿ. ನಿಮ್ಮ ನಿಮ್ಮ ಶಕ್ತ್ಯಾನುಸಾರವಾಗಿ ಈ ಯೋಜನೆಯನ್ನು ಪೂರ್ಣಗೊಳಿಸಿರಿ.</verse>
				<verse number="12">ಯಾರಿಗಾದರೂ ಕೊಡುವ ಮನಸ್ಸಿದ್ದರೆ, ಅದು ದೇವರ ದೃಷ್ಟಿಯಲ್ಲಿ ಕೊಟ್ಟಂತೆ ಪರಿಗಣಿಸಲಾಗುವುದು. ಏಕೆಂದರೆ ಕೊಡುವವರು ಎಷ್ಟು ಕೊಟ್ಟಿದ್ದಾರೆ ಎಂಬುದು ಪ್ರಾಮುಖ್ಯವಲ್ಲ, ಆದರೆ ಇಲ್ಲದಿರುವುದನ್ನು ದೇವರು ಬಯಸದೇ ಇರುವುದನ್ನು ಕೊಡಬಯಸುತ್ತಾರೆ.</verse>
				<verse number="13">ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಬೇರೆಯವರನ್ನು ಕಷ್ಟಕ್ಕೆ ಒಳಪಡಿಸಬಾರದೆಂಬುದು ನಮ್ಮ ಉದ್ದೇಶವಲ್ಲ. ಸಮಾನತ್ವವಿರಬೇಕೆಂಬುದೇ ನಮ್ಮ ಉದ್ದೇಶವಾಗಿದೆ.</verse>
				<verse number="14">ಸದ್ಯದಲ್ಲಿ ನಿಮ್ಮ ಸಮೃದ್ಧಿಯು ಅವರ ಕೊರತೆಯನ್ನು ನೀಗಿಸುವುದು. ಅನಂತರ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವುದು. ಆಗ ಸಮಾನತೆಯ ಗುರಿಯು ಉಂಟಾಗುವುದು.</verse>
				<verse number="15">ಪವಿತ್ರ ವೇದದಲ್ಲಿ ಬರೆದಿರುವಂತೆ: “ಅತಿಯಾಗಿ ಕೂಡಿಸಿದವನಿಗೆ ಹೆಚ್ಚಾಗಲಿಲ್ಲ, ಮಿತವಾಗಿ ಕೂಡಿಸಿದವನಿಗೆ ಕೊರತೆಯಾಗಲಿಲ್ಲ.”</verse>
				<verse number="16">ನಿಮ್ಮ ವಿಷಯವಾಗಿ ನನಗಿರುವ ಹಿತಚಿಂತನೆಯನ್ನು ತೀತನ ಹೃದಯದಲ್ಲಿಯೂ ಹುಟ್ಟಿಸಿದ್ದಕ್ಕಾಗಿ ದೇವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ.</verse>
				<verse number="17">ನಮ್ಮ ವಿನಂತಿಯನ್ನು ತೀತನು ಒಪ್ಪಿಕೊಂಡದ್ದು ಮಾತ್ರವಲ್ಲದೆ, ತನ್ನ ಸ್ವಂತ ಇಚ್ಛೆಯಿಂದ ನಿಮ್ಮಲ್ಲಿಗೆ ಬರಲು ಆಸಕ್ತಿಯಿಂದ ಹೊರಟಿರುತ್ತಾನೆ.</verse>
				<verse number="18">ಅವನೊಂದಿಗೆ ಇನ್ನೊಬ್ಬ ಸಹೋದರನನ್ನೂ ಕಳುಹಿಸುತ್ತಿದ್ದೇನೆ. ಆ ಸಹೋದರನು ಮಾಡಿದ ಸುವಾರ್ತೆ ಸೇವೆಯನ್ನು ಎಲ್ಲಾ ಸಭೆಗಳವರು ಪ್ರಶಂಶಿಸಿದ್ದಾರೆ.</verse>
				<verse number="19">ಅಲ್ಲದೆ, ಕರ್ತ ಯೇಸುವಿನ ಮಹಿಮೆಗಾಗಿಯೂ ಸಹಾಯಮಾಡಬೇಕೆಂಬ ಸದುದ್ದೇಶ ತೋರಿಸುವುದಕ್ಕಾಗಿಯೂ ನಾವು ಸೇವೆಯನ್ನು ನಿರ್ವಹಿಸುತ್ತೇವೆ. ಇದಕ್ಕಾಗಿಯೇ, ನಮ್ಮ ಜೊತೆ ಬಂದು ಸಹಾಯಮಾಡಲು ಸಭೆಗಳಿಂದ ಆಯ್ಕೆಯಾದವನು ಆ ಸಹೋದರನು.</verse>
				<verse number="20">ಹೀಗೆ ನಮ್ಮ ಕೈಗೆ ಒಪ್ಪಿಸಲಾದ ಈ ಉದಾರ ಕೊಡುಗೆಯ ವಿತರಣೆಯ ಕಾರ್ಯದಲ್ಲಿ ಯಾರೂ ನಮ್ಮ ಮೇಲೆ ತಪ್ಪು ಹೊರಿಸಲು ಆಸ್ಪದವಿರಕೂಡದು.</verse>
				<verse number="21">ಏಕೆಂದರೆ, ಕರ್ತ ಯೇಸುವಿನ ದೃಷ್ಟಿಯಲ್ಲಿ ಮಾತ್ರ ಅಲ್ಲ, ಜನರ ದೃಷ್ಟಿಯಲ್ಲಿಯೂ ಯೋಗ್ಯವಾದದ್ದನ್ನು ಮಾಡಬೇಕೆಂಬುದು ನಮ್ಮ ಪ್ರಯಾಸವಾಗಿದೆ.</verse>
				<verse number="22">ಇವರಿಬ್ಬರ ಜೊತೆಯಲ್ಲಿ ನಾವು ನಮ್ಮ ಅನೇಕ ಅನುಭವಗಳಿಂದ ಆಸಕ್ತಿಯುಳ್ಳವನೆಂಬುದನ್ನು ದೃಢಪಡಿಸಿಕೊಂಡ ಬೇರೊಬ್ಬ ಸಹೋದರನನ್ನೂ ಕಳುಹಿಸುತ್ತಿದ್ದೇವೆ. ಅವನು ನಿಮ್ಮ ಬಗ್ಗೆ ಪೂರ್ಣ ಭರವಸೆಯನ್ನಿಟ್ಟು ನಿಮಗೆ ನೆರವಾಗಲು ಇನ್ನೂ ಉತ್ಸುಕತೆಯಲ್ಲಿದ್ದಾನೆ.</verse>
				<verse number="23">ತೀತನು ನನ್ನ ಸಹೋದ್ಯೋಗಿ ಮತ್ತು ನಿಮ್ಮ ನಡುವೆಯಿರುವ ನನ್ನ ಸಹಕಾರಿಯಾಗಿರುತ್ತಾನೆ. ಇವನ ಸಂಗಡ ಬರುತ್ತಿರುವ ನಮ್ಮ ಸಹೋದರರು ಸಭೆಗಳ ಪ್ರತಿನಿಧಿಗಳಾಗಿದ್ದಾರೆ ಮತ್ತು ಕ್ರಿಸ್ತ ಯೇಸುವಿನ ಮಹಿಮೆಗೆ ಕಾರಣಸ್ಥರೂ ಆಗಿದ್ದಾರೆ.</verse>
				<verse number="24">ಆದ್ದರಿಂದ, ಇವರೊಂದಿಗೆ ನಿಮಗಿರುವ ಪ್ರೀತಿಯನ್ನೂ ನಿಮ್ಮ ಬಗ್ಗೆಯಿರುವ ನಮ್ಮ ಹೊಗಳಿಕೆಯನ್ನೂ ಸಭೆಗಳವರ ಮುಂದೆ ರುಜುಪಡಿಸಿ ತೋರಿಸಿರಿ.</verse>
			</chapter>
			<chapter number="9">
				<verse number="1">ದೇವಜನರಿಗೆ ಸಹಾಯ ಮಾಡುವುದನ್ನು ಕುರಿತು ನಾನು ನಿಮಗೆ ಬರೆಯುವ ಅವಶ್ಯವಿಲ್ಲ.</verse>
				<verse number="2">ಅಖಾಯದಲ್ಲಿರುವ ನೀವು ಕಳೆದ ಒಂದು ವರ್ಷದಿಂದ ಉದಾರವಾಗಿ ದಾನ ಮಾಡಲು ಸಿದ್ಧರಾಗಿದ್ದೀರಿ ಎಂಬ ವಿಷಯವನ್ನು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳಿದ್ದೇನೆ. ನಿಮ್ಮ ಆಸಕ್ತಿಯನ್ನು ಕೇಳಿ ಮಕೆದೋನ್ಯದವರಲ್ಲಿ ಎಷ್ಟೋ ಮಂದಿ ಕಾರ್ಯರೂಪಕ್ಕೆ ಉತ್ತೇಜನಗೊಂಡಿರುತ್ತಾರೆ.</verse>
				<verse number="3">ಆದರೂ ಈ ವಿಷಯದಲ್ಲಿ ನಿಮ್ಮ ಬಗ್ಗೆ ನಮಗಿರುವ ಹೊಗಳಿಕೆಯು ಸುಳ್ಳಾಗಿರಬಾರದೆಂದು ಸಹೋದರರನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ನೀವು ಸಹ ನಾನು ನಿಮಗೆ ಹೇಳಿದಂತೆ, ಇದಕ್ಕಾಗಿ ಸಿದ್ಧರಾಗಿರುವಿರಿ ಎಂದು ಭಾವಿಸುತ್ತೇನೆ.</verse>
				<verse number="4">ಏಕೆಂದರೆ, ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಜೊತೆಯಲ್ಲಿ ಬಂದು, ನೀವು ಇನ್ನೂ ಸಿದ್ಧರಿಲ್ಲದೆ ಇರುವುದನ್ನು ಕಂಡರೆ, ನಿಮಗೆ ಬೇಸರವಾಗುವುದಲ್ಲದೆ, ನಿಮ್ಮ ಬಗ್ಗೆ ಭರವಸೆಯಿಟ್ಟಿರುವುದಕ್ಕೆ ನಾವು ಸಹ ನಾಚಿಕೆಪಡುವ ಸನ್ನಿವೇಶ ಬರಬಾರದು.</verse>
				<verse number="5">ಆದ್ದರಿಂದ ಸಹೋದರರನ್ನು ಮುಂಚಿತವಾಗಿ ಹೋಗುವುದಕ್ಕೆ ನಾನು ಏರ್ಪಾಡು ಮಾಡಬೇಕಾಯಿತು. ಅವರು ಬಂದು ನೀವು ವಾಗ್ದಾನಮಾಡಿದ ಕೊಡುಗೆಯನ್ನು ಸಂಗ್ರಹಿಸುವ ಕಾರ್ಯವನ್ನು ಮುಗಿಸುವರು. ಹೀಗೆ ಈ ಉದಾರವಾಗಿರುವ ದಾನವು ಬಲಾತ್ಕಾರದ ವಸೂಲಿಯಾಗಿರದೆ ಮನಃಪೂರ್ವಕವಾಗಿ ಕೊಟ್ಟಿರುವ ಸಹಾಯ ಧನವಾಗಿರುವುದು.</verse>
				<verse number="6">ಸ್ವಲ್ಪವಾಗಿ ಬಿತ್ತುವವನು ಸ್ವಲ್ಪವಾಗಿ ಕೊಯ್ಯುವನು, ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿ ಕೊಯ್ಯುವನು ಎಂಬ ವಿಷಯವನ್ನು ನೆನಪಿನಲ್ಲಿಟ್ಟುಕೊಳ್ಳಿರಿ.</verse>
				<verse number="7">ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿರ್ಧರಿಸಿದ್ದನ್ನು ಕೊಡಲಿ. ಮನಸ್ಸಿಲ್ಲದ ಮನಸ್ಸಿನಿಂದಾಗಲಿ ಅಥವಾ ಬಲವಂತದಿಂದಾಗಲಿ ಕೊಡಬಾರದು. ಏಕೆಂದರೆ ಸಂತೋಷದಿಂದ ಕೊಡುವವನನ್ನು ದೇವರು ಪ್ರೀತಿಸುತ್ತಾರೆ.</verse>
				<verse number="8">ದೇವರು ಸಕಲ ವಿಧವಾದ ಕೃಪೆಯನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತರಾಗಿರುವುದರಿಂದ ನೀವು ಯಾವಾಗಲೂ ಎಲ್ಲಾ ವಿಷಯಗಳಲ್ಲಿಯೂ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಿ.</verse>
				<verse number="9">ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, “ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಕೊಟ್ಟರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು.”</verse>
				<verse number="10">ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಊಟವನ್ನು ಒದಗಿಸುವ ದೇವರು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು, ಹೆಚ್ಚಿಸಿ ನಿಮ್ಮ ನೀತಿಯ ಸುಗ್ಗಿಯನ್ನು ವೃದ್ಧಿಪಡಿಸುವರು.</verse>
				<verse number="11">ನೀವು ಸದಾ ಉದಾರಿಗಳಾಗುವಂತೆ ನಿಮ್ಮನ್ನು ಎಲ್ಲಾ ವಿಷಯಗಳಲ್ಲಿಯೂ ಸಿರಿವಂತರನ್ನಾಗಿ ಮಾಡುವನು. ನಿಮ್ಮ ಕೊಡುಗೆಯು ನಮ್ಮ ಸೇವೆಯ ಮೂಲಕ ಬೇರೆಯವರಿಗೆ ಮುಟ್ಟಿ, ಅವರು ದೇವರನ್ನು ಕೃತಜ್ಞತೆಯಿಂದ ಸ್ಮರಿಸುವಂತೆ ನಡೆಸುವುದು.</verse>
				<verse number="12">ಈ ನಿಮ್ಮ ಸೇವೆಯು ಬರೀ ದೇವಜನರ ಕೊರತೆಯನ್ನು ನೀಗಿಸುವುದು ಮಾತ್ರವಲ್ಲ, ಅನೇಕರು ದೇವರಿಗೆ ತುಂಬಿ ಹರಿಯುವಷ್ಟು ಕೃತಜ್ಞತಾಸ್ತುತಿ ಸಲ್ಲಿಸುವಂತೆ ಮಾಡುವುದು.</verse>
				<verse number="13">ನಿಮ್ಮ ಸ್ವಭಾವವನ್ನು ರುಜುಪಡಿಸಿದ ಈ ಸೇವೆಯ ನಿಮಿತ್ತವಾಗಿಯೂ, ಕ್ರಿಸ್ತ ಯೇಸುವಿನ ಸುವಾರ್ತೆಯ ಅರಿಕೆಯನ್ನು ಅನುಸರಿಸುವ ನಿಮ್ಮ ವಿಧೇಯತೆಗಾಗಿಯೂ ಇತರರು ದೇವರನ್ನು ಸ್ತುತಿಸುವರು. ಹೀಗೆ, ನೀವು ಅವರಿಗೂ ಪ್ರತಿಯೊಬ್ಬರಿಗೂ ಎಷ್ಟು ಉದಾರಿಗಳಾಗಿದ್ದೀರಿ ಎಂಬುದನ್ನು ತಿಳಿದುಕೊಳ್ಳುವರು.</verse>
				<verse number="14">ನಿಮಗೆ ದೊರೆತ ಮಿತಿಯಿಲ್ಲದ ದೇವರ ಕೃಪೆಯ ನಿಮಿತ್ತ, ಅವರು ನಿಮ್ಮನ್ನು ಕಾಣುವ ಬಯಕೆಯಿಂದ ನಿಮಗಾಗಿ ಪ್ರಾರ್ಥಿಸುವರು.</verse>
				<verse number="15">ವರ್ಣಿಸಲು ಅಸಾಧ್ಯವಾದ ದೇವರ ಕೃಪಾವರಕ್ಕಾಗಿ ಅವರಿಗೆ ಸ್ತೋತ್ರವಾಗಲಿ!</verse>
			</chapter>
			<chapter number="10">
				<verse number="1">ನಾನು ನಿಮ್ಮ ಬಳಿಯಲ್ಲಿ ಮುಖಾಮುಖಿಯಾಗಿ ಮಾತನಾಡುವಾಗ, “ಮೃದುವಾಗಿಯೂ” ನಿಮ್ಮಿಂದ ದೂರವಿರುವಾಗ “ಕಠಿಣನಾಗಿಯೂ ವರ್ತಿಸುವವನು” ಎಂತಲೂ ನೀವು ತಿಳಿದಿದ್ದೀರಿ. ಅಂಥ ಪೌಲನೆಂಬ, ನಾನು ಕ್ರಿಸ್ತ ಯೇಸುವಿನ ದೀನತ್ವದಿಂದಲೂ ಸಾತ್ವಿಕತೆಯಿಂದಲೂ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ:</verse>
				<verse number="2">ನಾನು ನಿಮ್ಮ ಬಳಿಗೆ ಬಂದಾಗ, ಕಠಿಣವಾಗಿ ವರ್ತಿಸಲು ನನಗೆ ಅವಕಾಶಕೊಡಬೇಡಿರಿ. ಏಕೆಂದರೆ ನಾವು ಪ್ರಾಪಂಚಿಕ ರೀತಿಗನುಸಾರವಾಗಿ ನಡೆಯುತ್ತಿದ್ದೇವೆಂದು ಆಕ್ಷೇಪಿಸುವ ಕೆಲವರ ವಿರುದ್ಧ ಖಂಡಿತವಾಗಿಯು ಕಠಿಣನಾಗಿಯೇ ವರ್ತಿಸಬೇಕೆಂದಿದ್ದೇನೆ.</verse>
				<verse number="3">ನಾವು ಈ ಲೋಕದಲ್ಲಿ ಜೀವಿಸುವವರಾದರೂ, ನಾವು ಲೋಕದವರಂತೆ ಹೋರಾಟ ಮಾಡುವವರಲ್ಲ.</verse>
				<verse number="4">ನಾವು ಹೋರಾಡುವಾಗ ಉಪಯೋಗಿಸುವ ಆಯುಧಗಳು ಲೋಕದವುಗಳಲ್ಲ. ಅವುಗಳಿಗೆ ಕೋಟೆಗಳನ್ನೇ ಕೆಡವಿ ಹಾಕುವ ದೈವಿಕ ಶಕ್ತಿ ಇದೆ.</verse>
				<verse number="5">ನಾವು ದೈವಜ್ಞಾನವನ್ನು ವಿರೋಧಿಸುವ ವಾಗ್ವಾದಗಳನ್ನೂ ಪ್ರತಿಯೊಂದು ನಟನೆಯನ್ನೂ ಧ್ವಂಸಮಾಡುತ್ತೇವೆ. ಪ್ರತಿಯೊಂದು ಯೋಚನೆಗಳನ್ನು ಕ್ರಿಸ್ತ ಯೇಸುವಿಗೆ ವಿಧೇಯವಾಗುವಂತೆ ಸೆರೆಹಿಡಿಯುವವರು ಆಗಿದ್ದೇವೆ.</verse>
				<verse number="6">ನಿಮ್ಮ ವಿಧೇಯತ್ವವು ಪರಿಪೂರ್ಣವಾದಾಗ, ನಾವು ಪ್ರತಿಯೊಂದು ಅವಿಧೇಯತ್ವವನ್ನೂ ಶಿಕ್ಷಿಸಲು ಸಿದ್ಧರಾಗಿದ್ದೇವೆ.</verse>
				<verse number="7">ನೀವು ಹೊರಗಿನ ತೋರಿಕೆಗಳನ್ನು ಮಾತ್ರ ತೀರ್ಪುಮಾಡುವವರಾಗಿದ್ದೀರಿ. ಯಾರಾದರೂ ತಾನು ಯೇಸುವಿಗೆ ಸೇರಿದವನು ಎಂದು ದೃಢವಾಗಿ ನಂಬುವುದಾದರೆ, ತಾನು ಹೇಗೆ ಕ್ರಿಸ್ತ ಯೇಸುವಿನವನೋ, ಹಾಗೆಯೇ ನಾವೂ ಕ್ರಿಸ್ತ ಯೇಸುವಿನವರು ಎಂದು ಅವನು ತಿಳಿದುಕೊಳ್ಳಲಿ.</verse>
				<verse number="8">ನಿಮ್ಮನ್ನು ಕೆಡವಿ ಹಾಕುವುದಕ್ಕಲ್ಲ. ನಿಮ್ಮ ಭಕ್ತಿವೃದ್ಧಿಮಾಡಲಿಕ್ಕೆ ಕರ್ತ ಯೇಸು ನಮಗೆ ಅಧಿಕಾರವನ್ನು ಕೊಟ್ಟಿದ್ದಾರೆ. ಈ ಅಧಿಕಾರದ ಬಗ್ಗೆ ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾನು ನಾಚಿಕೆಪಡುವುದಿಲ್ಲ.</verse>
				<verse number="9">ನನ್ನ ಪತ್ರಗಳಿಂದ ನಾನು ನಿಮಗೆ ಭಯ ಹುಟ್ಟಿಸಲು ಪ್ರಯತ್ನಿಸುವುದಕ್ಕೆ ನನಗೆ ಮನಸ್ಸಿಲ್ಲ.</verse>
				<verse number="10">“ಅವನ ಪತ್ರಗಳು ತೀಕ್ಷ್ಣವಾಗಿಯೂ ಶಕ್ತಿಯುತವಾಗಿಯೂ ಇವೆ. ಆದರೆ ಅವನು ಎದುರು ಬಂದಾಗ ನಿರ್ಬಲನೂ ಕೆಲಸಕ್ಕೆ ಬಾರದ ಮಾತುಗಳನ್ನಾಡುವವನೂ ಆಗಿದ್ದಾನೆ,” ಎಂದು ಕೆಲವರು ಹೇಳುತ್ತಾರೆ.</verse>
				<verse number="11">ಆದರೆ, ನಾವು ದೂರದಲ್ಲಿರುವಾಗ ಪತ್ರಗಳ ಮಾತಿನಲ್ಲಿ ಎಂಥವರಾಗಿದ್ದೇವೋ, ಹತ್ತಿರದಲ್ಲಿರುವಾಗಲೂ ಕೃತ್ಯದಲ್ಲಿ ಅಂಥವರಾಗಿಯೇ ಇರುತ್ತೇವೆ ಎಂದು ಅಂಥವರು ಅರ್ಥಮಾಡಿಕೊಳ್ಳಲಿ.</verse>
				<verse number="12">ತಮ್ಮನ್ನು ತಾವೇ ಹೊಗಳಿಕೊಳ್ಳುವವರೊಂದಿಗೆ ನಾವು ಹೋಲಿಸಿಕೊಳ್ಳಲು ಯತ್ನಿಸುವುದಿಲ್ಲ. ಏಕೆಂದರೆ, ಅವರು ತಮ್ಮತಮ್ಮೊಳಗೆ ತಮ್ಮನ್ನು ಅಳತೆ ಮಾಡಿಕೊಂಡು ಒಬ್ಬರೊಂದಿಗೊಬ್ಬರು ಹೋಲಿಸಿಕೊಳ್ಳುವುದರಿಂದ ವಿವೇಕವಿಲ್ಲದವರಾಗಿರುತ್ತಾರೆ.</verse>
				<verse number="13">ನಾವಾದರೋ ಮೇರೆ ತಪ್ಪಿ ಹೊಗಳಿಕೊಳ್ಳುವುದಿಲ್ಲ; ದೇವರು ತಾವೇ ನಮಗೆ ನೇಮಿಸಿದ ಸೇವಾಕ್ಷೇತ್ರದ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ. ಆ ಮೇರೆಯೊಳಗೆ ನೀವೂ ಒಳಪಟ್ಟಿದ್ದೀರಿ.</verse>
				<verse number="14">ನಾವು ಮೊದಲು ನಿಮ್ಮ ಬಳಿಗೆ ಬಾರದಿದ್ದರೆ, ನಮ್ಮ ಹೊಗಳಿಕೊಳ್ಳುವಿಕೆಯು ಮೇರೆಯನ್ನು ಉಲ್ಲಂಘಿಸುವುದಾಗಿರುತ್ತಿತ್ತು; ಆದರೆ ನಾವು ನಿಮಗೆ ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ಸಾರುವುದಕ್ಕಾಗಿ ನಿಮ್ಮ ಬಳಿಗೆ ಬಂದೇವಲ್ಲಾ.</verse>
				<verse number="15">ಬೇರೆಯವರು ಮಾಡಿದ ಪ್ರಯಾಸದ ಫಲಕ್ಕಾಗಿ, ನಾವು ಮೇರೆ ತಪ್ಪಿ ಹೊಗಳಿಕೊಳ್ಳುವವರಲ್ಲ. ಆದರೆ ನಿಮ್ಮ ವಿಶ್ವಾಸವು ವೃದ್ಧಿಯಾದಂತೆ, ನಿಮ್ಮ ಮಧ್ಯೆ ನಮ್ಮ ಸೇವಾಕ್ಷೇತ್ರವು ಅಧಿಕವಾಗಿ ವಿಸ್ತಾರವಾಗಬೇಕೆಂದು ನಿರೀಕ್ಷಿಸುತ್ತೇವೆ.</verse>
				<verse number="16">ಏಕೆಂದರೆ, ನಿಮ್ಮ ಪ್ರದೇಶಗಳಿಗೆ ಆಚೆ ಇರುವ ಸ್ಥಳಗಳಲ್ಲಿಯೂ ನಾವು ಸುವಾರ್ತೆಯನ್ನು ಸಾರಬೇಕು. ಇತರರು ಮಾಡಿದ ಸೇವಾಕ್ಷೇತ್ರದಲ್ಲಿ ನಾವು ಸೇವೆಮಾಡಿ, ಹೆಚ್ಚಳ ಪಡುವುದಕ್ಕೆ ನಮಗಿಷ್ಟವಿಲ್ಲ.</verse>
				<verse number="17">ಆದರೆ, “ಹೆಚ್ಚಳ ಪಡುವವನು ಕರ್ತ ದೇವರಲ್ಲಿಯೇ ಹೆಚ್ಚಳ ಪಡಲಿ.”</verse>
				<verse number="18">ತನ್ನನ್ನು ತಾನೇ ಹೊಗಳಿಕೊಳ್ಳುವವನಲ್ಲ, ಕರ್ತ ಯೇಸು ಯಾರನ್ನು ಹೊಗಳುತ್ತಾರೋ ಅವನೇ ಯೋಗ್ಯನು.</verse>
			</chapter>
			<chapter number="11">
				<verse number="1">ನನ್ನ ಬುದ್ಧಿಹೀನತೆಯನ್ನು ನೀವು ಇನ್ನೂ ಸ್ವಲ್ಪ ಸಹಿಸಿಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಈಗಾಗಲೇ ನೀವು ಸಹಿಸಿಕೊಂಡಿದ್ದೀರಿ.</verse>
				<verse number="2">ದೇವರು ನಿಮ್ಮ ವಿಷಯದಲ್ಲಿ ಅಸೂಯೆಪಡುವಂತೆ, ನಾನು ನಿಮ್ಮ ವಿಷಯದಲ್ಲಿ ಅಸೂಯೆಪಡುತ್ತಿದ್ದೇನೆ. ಹೇಗೆಂದರೆ, ನಿಮ್ಮನ್ನು ಶುದ್ಧ ಕನ್ನಿಕೆಯಾಗಿ ಕ್ರಿಸ್ತ ಯೇಸು ಎಂಬ ಒಬ್ಬರೇ ಪುರುಷನಿಗೆ ಒಪ್ಪಿಸಬೇಕೆಂದು ಆತನೊಂದಿಗೆ ನಾನು ನಿಶ್ಚಯ ಮಾಡಿದ್ದೆನಲ್ಲಾ.</verse>
				<verse number="3">ಆದರೆ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿಬಿದ್ದು, ಹೇಗೆ ಮೋಸ ಹೋದಳೋ, ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತ ಯೇಸುವಿನ ಮೇಲಿರಬೇಕಾದ ಯಥಾರ್ಥತೆಯನ್ನೂ ಶುದ್ಧ ಭಕ್ತಿಯನ್ನೂ ಬಿಟ್ಟುಹೋದೀತೆಂಬ ಭಯ ನನಗುಂಟು.</verse>
				<verse number="4">ಏಕೆಂದರೆ ಯಾವನಾದರೂ ನಿಮ್ಮ ಬಳಿಗೆ ಬಂದು ನಾನು ನಿಮಗೆ ಬೋಧಿಸದೆ ಇರುವ ಬೇರೊಬ್ಬ ಯೇಸುವಿನ ವಿಷಯ ಬೋಧಿಸಿದರೆ, ನೀವು ಸ್ವೀಕರಿಸುವಿರಿ. ನೀವು ಹೊಂದಿದ ಆತ್ಮನ ಬದಲಿಗೆ ಬೇರೊಂದು ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನೀವು ಕೇಳಿರುವ ಸುವಾರ್ತೆಯ ಬದಲು ಬೇರೊಂದು ಸುವಾರ್ತೆಯನ್ನು ಯಾರಾದರೂ ಬೋಧಿಸಿದರೆ, ನೀವು ಬೇಗನೇ ಒಪ್ಪಿಕೊಳ್ಳುತ್ತೀರಿ.</verse>
				<verse number="5">“ಅತ್ಯಂತ ಮಹಾ ಅಪೊಸ್ತಲರು” ಎಂದೆನಿಸಿದ ಇತರ ಅಪೊಸ್ತಲರಿಗಿಂತಲೂ ನಾನು ಕಡಿಮೆಯಾದವನಲ್ಲ ಎಂದು ಭಾವಿಸುತ್ತೇನೆ.</verse>
				<verse number="6">ನನ್ನ ಮಾತಿನಲ್ಲಿ ಚಾತುರ್ಯ ಇಲ್ಲದಿದ್ದರೂ ನನಗೆ ತಿಳುವಳಿಕೆಯಿದೆ. ಇದನ್ನು ನಾನು ಪ್ರತಿಯೊಂದು ಸಂದರ್ಭಗಳಲ್ಲಿಯೂ ಬಹಳ ಸ್ಪಷ್ಟಪಡಿಸಿರುತ್ತೇನೆ.</verse>
				<verse number="7">ಪ್ರತಿಫಲವನ್ನು ಎದುರುನೋಡದೇ, ದೇವರ ಸುವಾರ್ತೆಯನ್ನು ನೀವು ಉನ್ನತರಾಗಬೇಕೆಂದು, ನನ್ನನ್ನು ನಾನೇ ತಗ್ಗಿಸಿಕೊಂಡು ಉಚಿತವಾಗಿ ಸಾರಿದ್ದು ನನ್ನ ಪಾಪವೋ?</verse>
				<verse number="8">ನಿಮ್ಮ ಸೇವೆಯನ್ನು ಮಾಡುವುದಕ್ಕಾಗಿ ನಾನು ಬೇರೆ ಸಭೆಗಳಿಂದ ಸಹಾಯವನ್ನು ಹೊಂದಿ, ಅವರಿಂದ ವಸೂಲಿ ಮಾಡುತ್ತಿದ್ದೆ.</verse>
				<verse number="9">ನಾನು ನಿಮ್ಮಲ್ಲಿದ್ದಾಗ, ನನಗೆ ಕೊರತೆಯಾದಾಗ, ನಾನು ನಿಮ್ಮಲ್ಲಿ ಯಾರಿಗೂ ಭಾರವಾಗಲಿಲ್ಲ. ಏಕೆಂದರೆ, ಮಕೆದೋನ್ಯದಿಂದ ಬಂದಿದ್ದ ಸಹೋದರರು ನನ್ನ ಅವಶ್ಯಕತೆಯನ್ನು ಪೂರೈಸಿದರು. ಹೀಗೆ ನಾನು ನಿಮ್ಮಲ್ಲಿ ಯಾರಿಗೂ ಭಾರವಾಗಲಿಲ್ಲ. ಇನ್ನು ಮುಂದೆಯೂ ಭಾರವಾಗಿರುವುದಿಲ್ಲ.</verse>
				<verse number="10">ಅಖಾಯ ಪ್ರಾಂತದಲ್ಲಿರುವ ಯಾರೂ ಈ ನನ್ನ ಹೊಗಳಿಕೆಯನ್ನು ನಿಲ್ಲಿಸಲಾರರು ಎಂದು ಕ್ರಿಸ್ತ ಯೇಸುವಿನ ಸತ್ಯ ನನ್ನಲ್ಲಿ ಇರುವ ನಿಶ್ಚಯದಿಂದ ಹೇಳುತ್ತೇನೆ.</verse>
				<verse number="11">ಏಕೆ? ನಾನು ನಿಮ್ಮನ್ನು ಪ್ರೀತಿ ಇಲ್ಲದ್ದರಿಂದಲೋ? ನಾನು ಪ್ರೀತಿಸುತ್ತೇನೆಂದು ದೇವರಿಗೆ ಗೊತ್ತುಂಟು!</verse>
				<verse number="12">ತಾವು ಮಾಡುವ ಕಾರ್ಯಗಳ ಬಗ್ಗೆ ನಮ್ಮೊಂದಿಗೆ ಸರಿಸಮಾನವೆಂದು ಹೊಗಳಿಕೊಳ್ಳಲು ಅವಕಾಶವನ್ನು ಹುಡುಕುವವರಿಗೆ, ಯಾವ ಆಸ್ಪದವೂ ಸಿಗದಂತೆ ನಾನು ಮಾಡುತ್ತಿರುವುದನ್ನು ನಿಲ್ಲಿಸದೆ, ಇನ್ನು ಮುಂದೆಯೂ ಮಾಡುತ್ತಿರುವೆನು.</verse>
				<verse number="13">ಅಂಥಾ ಜನರು ಸುಳ್ಳು ಅಪೊಸ್ತಲರು, ವಂಚಿಸುವ ವರ್ತಕರು, ಕ್ರಿಸ್ತ ಯೇಸುವಿನ ಅಪೊಸ್ತಲರೆಂದು ವೇಷ ಹಾಕಿಕೊಂಡವರೂ ಆಗಿದ್ದಾರೆ.</verse>
				<verse number="14">ಇದರಲ್ಲಿ ಆಶ್ಚರ್ಯವೇನೂ ಇಲ್ಲ, ಸೈತಾನನೂ ಬೆಳಕಿನ ದೇವದೂತನಂತೆ ಕಾಣಿಸಿಕೊಳ್ಳಬಲ್ಲನು.</verse>
				<verse number="15">ಆದ್ದರಿಂದ ಸೈತಾನನ ಸೇವಕರೂ ನೀತಿಯ ಸೇವಕರಂತೆ ಕಾಣಿಸಿಕೊಳ್ಳುವುದಕ್ಕೆ ತಮ್ಮನ್ನು ಮಾರ್ಪಡಿಸಿಕೊಳ್ಳುವುದು ಆಶ್ಚರ್ಯವೇನೂ ಅಲ್ಲ. ಅವರ ಕೃತ್ಯಗಳಿಗೆ ತಕ್ಕಂತೆ ಅವರಿಗೆ ಅಂತ್ಯವೂ ಇರುವುದು.</verse>
				<verse number="16">ನಾನು ಬುದ್ಧಿಹೀನನೆಂದು ಯಾರೂ ನೆನಸಬಾರದೆಂದು ನಾನು ತಿರುಗಿ ಹೇಳುತ್ತೇನೆ. ಒಂದು ವೇಳೆ ಹಾಗೆ ನೆನಸಿದರೆ, ನೀವು ಬುದ್ಧಿಹೀನರನ್ನು ಸ್ವೀಕರಿಸುವಂತೆಯೇ, ನನ್ನನ್ನೂ ಸ್ವೀಕರಿಸಿರಿ. ಆಗ ನನ್ನನ್ನು ನಾನೇ ಪ್ರಶಂಶಿಸಿಕೊಳ್ಳಲು ನನಗೆ ಆಸ್ಪದವಾಗುವುದು.</verse>
				<verse number="17">ಈ ಹೆಚ್ಚಳ ಪಡುವ ವಿಷಯದಲ್ಲಿ ನಾನು ಕರ್ತ ಯೇಸು ಬಯಸಿದಂತೆ ಮಾತನಾಡದೆ, ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ.</verse>
				<verse number="18">ಅನೇಕರು ಪ್ರಾಪಂಚಿಕ ವಿಷಯಗಳಲ್ಲಿ ತಮ್ಮನ್ನು ಹೊಗಳಿಕೊಳ್ಳುವಂತೆ ನಾನೂ ಹೊಗಳಿಕೊಳ್ಳುವೆನು.</verse>
				<verse number="19">ಬುದ್ಧಿಹೀನರನ್ನು ಹರ್ಷದಿಂದ ಸಹಿಸಿಕೊಳ್ಳುತ್ತಿರುವ ಬುದ್ಧಿವಂತರು ನೀವು!</verse>
				<verse number="20">ನಿಜವಾಗಿ ಹೇಳಬೇಕಾದರೆ, ಯಾರಾದರೂ ನಿಮ್ಮನ್ನು ಗುಲಾಮರನ್ನಾಗಿ ಮಾಡಿಕೊಂಡರೂ, ನಿಮ್ಮನ್ನು ಮರುಳುಗೊಳಿಸಿದರೂ, ತಮ್ಮ ಸ್ವಂತ ಪ್ರಯೋಜನಕ್ಕಾಗಿ ಬಳಸಿಕೊಂಡರೂ, ನಿಮ್ಮ ಕೆನ್ನೆಗೆ ಬಾರಿಸಿದರೂ, ನೀವು ಸಹಿಸಿಕೊಳ್ಳುತ್ತೀರಲ್ಲಾ.</verse>
				<verse number="21">ಹೀಗೆಲ್ಲಾ ಮಾಡಲು ಬಹಳ ಬಲಹೀನರಾದ ನಮಗೆ ಸಾಧ್ಯವಿಲ್ಲ ಎಂದು ಒಪ್ಪಿಕೊಳ್ಳಲು ನನಗೆ ನಾಚಿಕೆಯಾಗುತ್ತದೆ! ಯಾವುದನ್ನು ಇತರರು ಹೊಗಳಿಕೊಳ್ಳುವುದಕ್ಕೆ ಧೈರ್ಯ ಮಾಡುತ್ತಾರೋ, ಅದನ್ನು ನಾನು ಬುದ್ಧಿಹೀನನಂತೆ ಹೊಗಳುವ ಧೈರ್ಯ ಮಾಡುತ್ತೇನೆ.</verse>
				<verse number="22">ಅವರು ಹೀಬ್ರಿಯರೋ? ನಾನೂ ಹೀಬ್ರಿಯನೇ. ಅವರು ಇಸ್ರಾಯೇಲರೋ? ನಾನೂ ಇಸ್ರಾಯೇಲನೇ. ಅವರು ಅಬ್ರಹಾಮನ ಸಂತತಿಯವರೋ? ನಾನೂ ಕೂಡಾ ಅಬ್ರಹಾಮನ ಸಂತತಿಯೇ.</verse>
				<verse number="23">ಅವರು ಕ್ರಿಸ್ತ ಯೇಸುವಿನ ಸೇವಕರೋ? ಅವರಿಗಿಂತ ಹೆಚ್ಚಾಗಿ ನಾನು ಸೇವೆ ಮಾಡಿದ್ದೇನೆ. ನಾನು ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ. ನಾನು ಅತಿಯಾಗಿ ಪ್ರಯಾಸ ಪಟ್ಟಿರುತ್ತೇನೆ. ಅನೇಕಬಾರಿ ಸೆರೆಮನೆಗೆ ಹಾಕಲಾದೆನು. ಬಹು ಕ್ರೂರವಾದ ರೀತಿಯಲ್ಲಿ ಪೆಟ್ಟುಗಳನ್ನು ತಿಂದೆನು. ಅನೇಕಬಾರಿ ಮರಣವನ್ನು ಎದುರಿಸಿದೆನು.</verse>
				<verse number="24">ಯೆಹೂದ್ಯರ ಕೈಯಿಂದ ಐದು ಬಾರಿ ನಲ್ವತ್ತಕ್ಕೆ ಒಂದು ಕಡಿಮೆ ಛಡಿ ಏಟುಗಳನ್ನು ತಿಂದಿದ್ದೇನೆ.</verse>
				<verse number="25">ಮೂರು ಸಾರಿ ದೊಣ್ಣೆಯಿಂದ ಬಡಿಸಿಕೊಂಡಿದ್ದೇನೆ. ಒಂದು ಸಾರಿ ಕಲ್ಲೆಸೆದು ನನ್ನನ್ನು ಕೊಲ್ಲಲು ನೋಡಿದರು. ಮೂರು ಬಾರಿ ನಾನು ಪ್ರಯಾಣಿಸುತ್ತಿದ್ದ ಹಡಗು ಒಡೆದು ನೀರು ಪಾಲಾಯಿತು. ಒಂದು ಇಡೀ ಹಗಲುರಾತ್ರಿ ನಾನು ಸಮುದ್ರದ ಮೇಲೆ ತೇಲಿದೆನು.</verse>
				<verse number="26">ಊರಿಂದೂರಿಗೆ ಪ್ರಯಾಣ ಮಾಡುತ್ತಲೇ ಇದ್ದೆನು, ನದಿಗಳಿಂದ ಅಪಾಯ, ದಾರಿಗಳ್ಳರಿಂದ ಅಪಾಯ, ನನ್ನ ಸ್ವಂತ ಜನರಿಂದ ಅಪಾಯ, ಯೆಹೂದ್ಯರಲ್ಲದವರಿಂದ ಅಪಾಯ, ಪಟ್ಟಣಗಳಲ್ಲಿ ಅಪಾಯ, ಹೊರ ಪ್ರದೇಶಗಳಲ್ಲಿ ಅಪಾಯ, ಸಮುದ್ರದಲ್ಲಿ ಅಪಾಯ ಮತ್ತು ಸುಳ್ಳು ಸಹೋದರರಿಂದ ಅಪಾಯಗಳನ್ನೆಲ್ಲಾ ನಾನು ಎದುರಿಸಿದೆನು.</verse>
				<verse number="27">ನಾನು ಪ್ರಯಾಸಪಟ್ಟು ಮೈಮುರಿದು ಕೆಲಸ ಮಾಡಿದೆನು. ಎಷ್ಟೋ ಬಾರಿ ನಿದ್ರೆಗೆಟ್ಟೆನು. ಹಸಿವೆ ಬಾಯಾರಿಕೆಗಳೇನೆಂಬುದನ್ನು ಅರಿತೆನು. ಊಟವಿಲ್ಲದೆ ಎಷ್ಟೋ ಬಾರಿ ಉಪವಾಸ ಬಿದ್ದೆನು. ಸರಿಯಾದ ಬಟ್ಟೆ ಇಲ್ಲದೆ ಚಳಿಯಲ್ಲಿ ಬಹಳವಾಗಿ ಸಂಕಟಪಟ್ಟೆನು.</verse>
				<verse number="28">ಇಷ್ಟೇ ಅಲ್ಲ, ಎಲ್ಲಾ ಸಭೆಗಳ ಮೇಲಿರುವ ಚಿಂತೆಯು ನನ್ನನ್ನು ದಿನನಿತ್ಯವೂ ಬಾಧಿಸುತ್ತಿದೆ.</verse>
				<verse number="29">ನಿಮ್ಮಲ್ಲಿ ಯಾರಾದರೂ ಬಲಹೀನರಾಗಿದ್ದರೆ, ನಾನೂ ಬಲಹೀನನಾಗಿರುವುದಿಲ್ಲವೋ? ನಿಮ್ಮಲ್ಲಿ ಯಾವನಾದರೂ ಪಾಪದಲ್ಲಿ ಬಿದ್ದುಹೋದರೆ, ನಾನು ನೊಂದುಕೊಳ್ಳುವುದಿಲ್ಲವೋ?</verse>
				<verse number="30">ನನ್ನನ್ನು ಹೊಗಳಿಕೊಳ್ಳಬೇಕಾಗಿದ್ದರೆ, ನಾನು ನನ್ನ ಬಲಹೀನತೆಯಲ್ಲಿ ಹೊಗಳಿಕೊಳ್ಳುವೆನು.</verse>
				<verse number="31">ನಮ್ಮ ಕರ್ತ ಯೇಸುವಿನ ದೇವರೂ ತಂದೆಯೂ ನಾನು ಸುಳ್ಳು ಹೇಳುವುದಿಲ್ಲ ಎಂಬುದನ್ನು ಬಲ್ಲವರಾಗಿದ್ದಾರೆ. ಅವರಿಗೇ ನಿತ್ಯವೂ ಸ್ತುತಿ ಸಲ್ಲಲಿ.</verse>
				<verse number="32">ದಮಸ್ಕದ ಅರಸನಾದ ಅರೇತನ ಆಜ್ಞೆಯ ಪ್ರಕಾರ, ಅಲ್ಲಿಯ ರಾಜ್ಯಪಾಲನು ನನ್ನನ್ನು ಹಿಡಿದು ಬಂಧಿಸಬೇಕೆಂದು ದಮಸ್ಕದ ಪಟ್ಟಣವನ್ನು ಕಾವಲಿರಿಸಿದನು.</verse>
				<verse number="33">ಆದರೆ ಪಟ್ಟಣದ ಕೋಟೆ ಗೋಡೆಯ ಕಿಟಿಕಿಯೊಳಗಿಂದ ಒಂದು ಬುಟ್ಟಿಯ ಮೂಲಕ ಕೆಳಗಿಳಿಸಲಾಗಿ, ಅವನ ಕೈಯೊಳಗಿಂದ ನಾನು ತಪ್ಪಿಸಿಕೊಂಡೆನು.</verse>
			</chapter>
			<chapter number="12">
				<verse number="1">ನನ್ನ ಹೊಗಳಿಕೆಯಲ್ಲಿ ಪ್ರಯೋಜನವಿಲ್ಲದಿದ್ದರೂ ಅದು ಅವಶ್ಯವಾಗಿದೆ. ನಾನು ಈಗ ಕರ್ತ ಯೇಸುವಿನಿಂದ ಹೊಂದಿದ ದರ್ಶನಗಳನ್ನು ಮತ್ತು ಪ್ರಕಟನೆಗಳನ್ನು ಕುರಿತು ಹೇಳುತ್ತೇನೆ.</verse>
				<verse number="2">ಕ್ರಿಸ್ತ ಯೇಸುವಿನಲ್ಲಿ ಒಬ್ಬನನ್ನು ನಾನು ಬಲ್ಲೆನು. ಹದಿನಾಲ್ಕು ವರ್ಷಗಳ ಹಿಂದೆ ನಾನು ಮೂರನೆಯ ಸ್ವರ್ಗಕ್ಕೆ ಒಯ್ಯಲಾದೆನು. ನಾನು ದೇಹ ಸಹಿತವಾಗಿ ಹೋದೆನೋ, ದೇಹ ರಹಿತನಾಗಿ ಹೋದೆನೋ ನನಗೆ ಗೊತ್ತಿಲ್ಲ ದೇವರಿಗೇ ಗೊತ್ತು.</verse>
				<verse number="3">ನನ್ನ ಅನುಭವ ದೇಹಸಹಿತನಾಗಿಯೋ, ದೇಹರಹಿತನಾಗಿಯೋ ಇದು ನನಗೆ ಗೊತ್ತಿಲ್ಲ. ದೇವರಿಗೇ ಗೊತ್ತು.</verse>
				<verse number="4">ನಾನು ಪರದೈಸಕ್ಕೆ ಒಯ್ಯಲಾದೆನು. ಅಲ್ಲಿ ನಾನು ವಿವರಿಸಲು ಅಸಾಧ್ಯವಾದದ್ದೂ ವರ್ಣಿಸಲು ಅಪ್ಪಣೆಯಿಲ್ಲದ್ದೂ ಆಗಿರುವ ವಿಷಯಗಳನ್ನು ಕೇಳಿದೆನು.</verse>
				<verse number="5">ಈ ಅನುಭವಗಳನ್ನು ಕುರಿತು ನಾನು ಹೆಚ್ಚಳ ಪಡುವೆನು. ಆದರೆ ನನ್ನ ವಿಷಯದಲ್ಲಿ ಅಲ್ಲ; ನನ್ನ ಬಲಹೀನತೆ ವಿಷಯದಲ್ಲಿ ಮಾತ್ರ ನಾನು ಹೊಗಳಿಕೊಳ್ಳುವೆನು.</verse>
				<verse number="6">ಒಂದು ವೇಳೆ ಹೊಗಳಿಕೊಳ್ಳಲು ಬಯಸಿದರೂ ನಾನು ಬುದ್ಧಿಹೀನನಾಗುವುದಿಲ್ಲ. ಏಕೆಂದರೆ, ನಾನು ಸತ್ಯವನ್ನೇ ಹೇಳುತ್ತಿದ್ದೇನೆ. ಆದರೆ ಯಾರೂ ನಾನು ಮಾಡುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನ ಬಗ್ಗೆ ಎಣಿಸಬಾರದು.</verse>
				<verse number="7">ಬಹು ವಿಶೇಷವಾದ ಪ್ರಕಟನೆಗಳ ಬಗ್ಗೆ ನಾನು ಗರ್ವಪಡದಂತೆ, ನನ್ನ ಶರೀರದಲ್ಲಿ ಒಂದು ಮುಳ್ಳನ್ನು ಕೊಡಲಾಗಿತ್ತು. ಅದು ನನ್ನನ್ನು ಕಾಡಿಸಲು ಕಳುಹಿಸಲಾದ ಸೈತಾನನ ದೂತನೇ ಆಗಿತ್ತು.</verse>
				<verse number="8">ಅದು ನನ್ನಿಂದ ತಗೆದುಹಾಕಬೇಕೆಂದು ನಾನು ಮೂರು ಸಾರಿ ಕರ್ತ ಯೇಸುವನ್ನು ಬೇಡಿಕೊಂಡೆನು.</verse>
				<verse number="9">ಅದಕ್ಕೆ ಕರ್ತ ಯೇಸು, “ನನ್ನ ಕೃಪೆಯೇ ನಿನಗೆ ಸಾಕು. ನನ್ನ ಶಕ್ತಿಯು ಬಲಹೀನತೆಯಲ್ಲಿಯೇ ಪರಿಪೂರ್ಣವಾಗುವುದು,” ಎಂದು ನನಗೆ ಹೇಳಿದರು. ಆದ್ದರಿಂದ ಕ್ರಿಸ್ತ ಯೇಸುವಿನ ಶಕ್ತಿಯು ನನ್ನ ಮೇಲೆ ನೆಲೆಯಾಗಿರಬೇಕೆಂದು, ಬಹಳ ಆನಂದದಿಂದ ನನ್ನ ಬಲಹೀನತೆಯಲ್ಲಿಯೇ ಹೆಚ್ಚಳ ಪಡುವೆನು.</verse>
				<verse number="10">ಹೀಗಿರುವುದರಿಂದ ಕ್ರಿಸ್ತ ಯೇಸುವಿನ ನಿಮಿತ್ತ ನನಗೆ ಬಲಹೀನತೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಹರ್ಷಿಸುತ್ತೇನೆ. ಏಕೆಂದರೆ, ಬಲಹೀನತೆಯಲ್ಲಿಯೇ ನಾನು ಶಕ್ತನಾಗಿರುವೆನು.</verse>
				<verse number="11">ನೀವೇ ನನ್ನನ್ನು ಹೊಗಳಿಕೊಳ್ಳುವಂತೆ ಮಾಡಿ, ನಾನು ಬುದ್ಧಿಹೀನನಾಗಿ ನಡೆಯಲು ಒತ್ತಾಯಿಸಿದ್ದೀರಿ. ನನಗೆ ನಿಮ್ಮಿಂದಲೇ ಹೊಗಳಿಕೆಯು ಬೇಕಾಗಿತ್ತು. ಏಕೆಂದರೆ ನಾನು ಕೇವಲ ಅತ್ಯಲ್ಪನಾದರೂ “ಅತಿಶ್ರೇಷ್ಠರಾದ ಅಪೊಸ್ತಲರಿಗಿಂತ” ಕಡಿಮೆ ಅಲ್ಲ.</verse>
				<verse number="12">ನಾನು ಸೂಚಕಕಾರ್ಯಗಳನ್ನೂ, ಅದ್ಭುತಗಳನ್ನೂ, ಮಹತ್ಕಾರ್ಯಗಳನ್ನೂ ನಡೆಸುವುದರಲ್ಲಿ ಸರ್ವ ಸಹನೆಯಲ್ಲಿಯೂ ಸತ್ಯ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳನ್ನು ನಿಮ್ಮ ನಡುವೆ ತೋರಿಸಿದೆನು.</verse>
				<verse number="13">ನಾನು ನಿಮಗೆ ಎಂದೂ ಭಾರವಾಗಿರಲಿಲ್ಲ ಎಂಬ ಒಂದೇ ವಿಷಯದಲ್ಲಿ ಹೊರತು, ಬೇರೆ ಯಾವ ವಿಷಯದಲ್ಲಿಯೂ ನಿಮ್ಮನ್ನು ಉಳಿದ ಸಭೆಗಳವರಿಗಿಂತ ಕಡಿಮೆ ಮಾಡಲಿಲ್ಲ. ಈ ನನ್ನ ತಪ್ಪನ್ನು ಕ್ಷಮಿಸಿರಿ.</verse>
				<verse number="14">ಇಗೋ, ನಾನು ನಿಮ್ಮ ಬಳಿಗೆ ಬರುವುದಕ್ಕೆ ಸಿದ್ದನಾಗಿರುವುದು ಇದು ಮೂರನೆಯ ಸಾರಿ. ನಾನು ಬಂದಾಗ ನಿಮಗೆ ಭಾರವಾಗಲು ಬಿಡುವುದಿಲ್ಲ. ನಾನು ನಿಮ್ಮ ಸೊತ್ತನ್ನು ಆಶಿಸುವುದಿಲ್ಲ. ನಿಮ್ಮನ್ನೇ ಆಶಿಸುತ್ತೇನೆ. ಮಕ್ಕಳು ತಂದೆತಾಯಿಗಳಿಗೋಸ್ಕರ ನಿಕ್ಷೇಪವನ್ನು ಕೂಡಿಸಿಡುವುದಿಲ್ಲ. ತಂದೆತಾಯಿಗಳು ಮಕ್ಕಳಿಗೋಸ್ಕರ ಕೂಡಿಸಿಡುತ್ತಾರಷ್ಟೇ.</verse>
				<verse number="15">ನಾನಂತೂ ನನಗಿರುವುದೆಲ್ಲವನ್ನೂ ನಿಮ್ಮ ಆತ್ಮಗಳಿಗೋಸ್ಕರ ಬಹು ಸಂತೋಷದಿಂದ ವೆಚ್ಚಮಾಡುತ್ತೇನೆ. ನನ್ನನ್ನು ಕೂಡ ನಿಮಗೋಸ್ಕರ ವೆಚ್ಚಮಾಡಲು ಸಿದ್ಧನಾಗಿದ್ದೇನೆ. ನಾನು ನಿಮ್ಮನ್ನು ಹೆಚ್ಚಾಗಿ ಪ್ರೀತಿಸಿದರೆ, ನೀವು ನನ್ನನ್ನು ಕಡಿಮೆಯಾಗಿ ಪ್ರೀತಿಸುವಿರೋ?</verse>
				<verse number="16">ಏನೇ ಇದ್ದರೂ, ನಾನು ನಿಮಗೆ ಭಾರವಾಗಿರಲಿಲ್ಲ; ನಾನು ಯುಕ್ತಿಯುಳ್ಳವನಾಗಿ ನಿಮ್ಮನ್ನು ಉಪಾಯದಿಂದ ಸುಲಿದುಕೊಂಡೆನೋ?</verse>
				<verse number="17">ನಾನು ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾರ ಮೂಲಕವಾಗಿಯಾಗಲಿ ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡೆನೋ?</verse>
				<verse number="18">ನಿಮ್ಮ ಬಳಿಗೆ ಹೋಗುವುದಕ್ಕೆ ನಾನು ತೀತನನ್ನು ಒತ್ತಾಯಪಡಿಸಿ, ಅವನ ಜೊತೆಯಲ್ಲಿ ಆ ಸಹೋದರನನ್ನು ಕಳುಹಿಸಿಕೊಟ್ಟೆನು. ತೀತನು ನಿಮ್ಮನ್ನು ವಂಚಿಸಿ ಏನಾದರೂ ತೆಗೆದುಕೊಂಡನೋ? ನಾವಿಬ್ಬರೂ ಒಂದೇ ಆತ್ಮದಲ್ಲಿ ನಡೆದು ಒಂದೇ ಹೆಜ್ಜೆ ಜಾಡಿನಲ್ಲಿ ನಡೆಯಲಿಲ್ಲವೋ?</verse>
				<verse number="19">ನಾವು ಇಷ್ಟು ಹೊತ್ತು ನಿಮ್ಮ ಮುಂದೆ ಪ್ರತಿವಾದ ಮಾಡುತ್ತಿದ್ದೇವೆಂದು ನೆನಸುತ್ತೀರೋ? ಹಾಗೆ ಅಲ್ಲ; ಪ್ರಿಯರೇ, ನಾವು ಮಾಡುವುದೆಲ್ಲವೂ ನಿಮ್ಮ ಭಕ್ತಿವೃದ್ಧಿಗಾಗಿ ದೇವರ ದೃಷ್ಟಿಯಲ್ಲಿ ಕ್ರಿಸ್ತ ಯೇಸುವಿನಲ್ಲಿ ಇರುವವರಂತೆ ಮಾತನಾಡುವವರಾಗಿದ್ದೇವೆ.</verse>
				<verse number="20">ನಾನು ಬಂದಾಗ ಒಂದು ವೇಳೆ ನೀವು ನನ್ನ ಮನಸ್ಸಿನ ತೋರಿಕೆಯ ಪ್ರಕಾರ ಇರುವುದಿಲ್ಲವೋ ಏನೋ? ನಾನು ನಿಮ್ಮ ಇಷ್ಟದ ಪ್ರಕಾರ ತೋರದೆ ಇರಬಹುದು. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ಕೋಪ, ಭೇದಗಳು, ಚಾಡಿ ಹೇಳುವುದು, ಹರಟೆ ಹೊಡೆಯುವುದು, ಉಬ್ಬಿಕೊಳ್ಳುವುದು, ಕಲಹ ಎಬ್ಬಿಸುವುದು, ಇವುಗಳು ಕಾಣಬರುವುದೋ ಎಂಬ ಭಯ ನನಗೆ ಉಂಟು.</verse>
				<verse number="21">ನಾನು ತಿರುಗಿ ಬಂದಾಗ, ಹಿಂದೆ ನಿಮ್ಮಲ್ಲಿ ಅಶುದ್ಧತ್ವ, ಲೈಂಗಿಕ ಅನೈತಿಕತೆ, ಪೋಕರಿತನ ಮುಂತಾದ ಪಾಪಗಳನ್ನು ಮಾಡಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಬಿಡುವನು ಎಂದು ದುಃಖಪಡಬೇಕಾಗಿರುವುದರಿಂದ ನಾನು ಭಯಪಡುತ್ತೇನೆ.</verse>
			</chapter>
			<chapter number="13">
				<verse number="1">ನಾನು ನಿಮ್ಮ ಬಳಿಗೆ ಬರುವುದು ಇದು ಮೂರನೆಯ ಸಾರಿ. “ಇಬ್ಬರು ಮೂವರು ಸಾಕ್ಷಿಗಳ ಬಾಯಿಂದ ಪ್ರತಿಯೊಂದು ಮಾತೂ ಸ್ಥಾಪಿತವಾಗಬೇಕು,” ಎಂದು ಬರೆಯಲಾಗಿದೆ.</verse>
				<verse number="2">ನಾನು ಎರಡನೆಯ ಸಾರಿ ನಿಮ್ಮ ಬಳಿಗೆ ಬಂದಿದ್ದಾಗ, ಗತಕಾಲದಲ್ಲಿ ಪಾಪ ಮಾಡುತ್ತಿದ್ದವರನ್ನು ಎಚ್ಚರಿಸಿದೆನು. ನಾನು ತಿರುಗಿ ಬಂದರೆ, ನಿಮ್ಮನ್ನು ಶಿಕ್ಷಿಸದೆ ಬಿಡುವುದಿಲ್ಲವೆಂದು ಹೇಗೆ ಹೇಳಿದೆನೋ, ಹಾಗೆಯೇ ಈಗಲೂ ನಿಮಗೆ ದೂರದಲ್ಲಿದ್ದುಕೊಂಡು ಹೇಳುತ್ತಿದ್ದೇನೆ.</verse>
				<verse number="3">ಕ್ರಿಸ್ತ ಯೇಸು ನನ್ನ ಮೂಲಕ ಮಾತನಾಡುತ್ತಾನೆಂಬುದಕ್ಕೆ ನಿಮಗೆ ಬೇಕಾದ ನಿದರ್ಶನವು ಆಗ ತೋರಿಬರುವುದು. ಬಲಹೀನನಾಗಿ ಕ್ರಿಸ್ತನು ನಿಮ್ಮೊಂದಿಗೆ ವ್ಯವಹರಿಸದೆ, ನಿಮ್ಮ ನಡುವೆ ಶಕ್ತನಾಗಿದ್ದಾನೆ.</verse>
				<verse number="4">ಕ್ರಿಸ್ತ ಯೇಸು ಬಲಹೀನತೆಯಲ್ಲಿ ಶಿಲುಬೆಗೆ ಹಾಕಲಾದರು ನಿಜ. ಆದರೆ ಅವರು ದೇವರ ಶಕ್ತಿಯಿಂದ ಜೀವಿಸುತ್ತಿದ್ದಾರೆ. ನಾವು ಸಹ ಬಲಹೀನತೆಯುಳ್ಳವರಾಗಿದ್ದೇವೆ. ಆದರೆ ನಾವು ನಿಮ್ಮ ಸೇವೆ ಮಾಡುವಂತೆ, ನಾವು ಕ್ರಿಸ್ತ ಯೇಸುವಿನೊಂದಿಗೆ ದೇವರ ಶಕ್ತಿಯಿಂದ ಬದುಕುತ್ತಿದ್ದೇವೆ.</verse>
				<verse number="5">ನಂಬಿಕೆಯಲ್ಲಿ ಇದ್ದೀರೋ, ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ. ನಿಮ್ಮನ್ನು ಪರಿಶೋಧಿಸಿಕೊಳ್ಳಿರಿ. ಏನು, ಕ್ರಿಸ್ತ ಯೇಸು ನಿಮ್ಮಲ್ಲಿದ್ದಾರೆಂಬುದರ ಬಗ್ಗೆ ನಿಮಗೆ ನಂಬಿಕೆಯಿಲ್ಲವೋ? ಅವರು ನಿಮ್ಮಲ್ಲಿಲ್ಲದಿದ್ದರೆ, ನೀವು ಪರೀಕ್ಷೆಯಲ್ಲಿ ಉತ್ತೀರ್ಣರಾದವರಲ್ಲ.</verse>
				<verse number="6">ನಾವಂತೂ ಉತ್ತೀರ್ಣರಾದವರೆಂದು ನಿಮಗೆ ಗೊತ್ತಾಗುವುದೆಂದು ನಾನು ನಿರೀಕ್ಷಿಸುತ್ತೇನೆ.</verse>
				<verse number="7">ನೀವು ಕೆಟ್ಟದ್ದೇನೂ ಮಾಡಬಾರದೆಂದು ನಾವು ದೇವರನ್ನು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವೇ ಉತ್ತೀರ್ಣರಾದವರು ಎಂದು ಕಂಡುಬರಬೇಕೆಂಬುದು ನಮ್ಮ ಉದ್ದೇಶವಲ್ಲ. ನಾವು ಸೋತವರಾಗಿ ಕಂಡುಬಂದರೂ ನೀವು ಒಳ್ಳೆಯದನ್ನೇ ಮಾಡಬೇಕೆಂಬುದು ನಮ್ಮ ಪ್ರಾರ್ಥನೆಯಾಗಿದೆ.</verse>
				<verse number="8">ಸತ್ಯಕ್ಕೆ ವಿರುದ್ಧವಾಗಿ ನಾವೇನೂ ಮಾಡಲಾರೆವು. ಸತ್ಯದ ಪರವಾಗಿಯೇ ಎಲ್ಲವನ್ನೂ ಮಾಡುತ್ತೇವೆ.</verse>
				<verse number="9">ನಾವು ಬಲಹೀನರಾಗಿದ್ದರೂ, ನೀವು ಬಲಿಷ್ಠರಾಗಿದ್ದಿರೆಂದು ತಿಳಿದು ಆನಂದಪಡುತ್ತೇವೆ. ನೀವು ಪರಿಪೂರ್ಣರಾಗಬೇಕೆಂದೇ ನಾವು ಪ್ರಾರ್ಥಿಸುತ್ತೇವೆ.</verse>
				<verse number="10">ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ, ಈ ಮಾತುಗಳನ್ನು ಬರೆದಿದ್ದೇನೆ. ನಾನು ಬಂದಾಗ ನಿಮ್ಮನ್ನು ಕೆಡವಿ ಹಾಕುವುದಕ್ಕಲ್ಲ ಆದರೆ ಕಟ್ಟುವುದಕ್ಕಾಗಿ ಕರ್ತ ಯೇಸು ನನಗೆ ಕೊಟ್ಟಿರುವ ಅಧಿಕಾರದಿಂದ ನಿಮಗೆ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಅಪೇಕ್ಷಿಸುತ್ತೇನೆ.</verse>
				<verse number="11">ಪ್ರಿಯರೇ, ಕಡೆಯ ಮಾತೇನೆಂದರೆ, ಆನಂದಪಡಿರಿ! ನಿಮ್ಮನ್ನು ಪೂರ್ಣ ಪುನಃಸ್ಥಾಪನೆಗಾಗಿ ಕ್ರಮಪಡಿಸಿಕೊಳ್ಳಿರಿ, ಉತ್ತೇಜನಗೊಳ್ಳಿರಿ, ಒಂದೇ ಮನಸ್ಸುಳ್ಳವರಾಗಿರಿ, ಸಮಾಧಾನದಿಂದಿರಿ. ಆಗ ಪ್ರೀತಿ ಹಾಗೂ ಶಾಂತಿಯ ದೇವರು ನಿಮ್ಮ ಸಂಗಡ ಇರುವರು.</verse>
				<verse number="12">ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.</verse>
				<verse number="13">ದೇವಜನರೆಲ್ಲರೂ ನಿಮಗೆ ತಮ್ಮ ವಂದನೆಗಳನ್ನು ತಿಳಿಸಿದ್ದಾರೆ.</verse>
				<verse number="14">ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮ ದೇವರ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡ ಇರಲಿ.</verse>
			</chapter>
		</book>
		<book number="48">
			<chapter number="1">
				<verse number="1">ಮನುಷ್ಯರಿಂದಾಗಲಿ, ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಕ್ರಿಸ್ತ ಯೇಸುವಿನ ಮುಖಾಂತರವೂ ಅವರನ್ನು ಮರಣದಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ</verse>
				<verse number="2">ನನ್ನ ಜೊತೆಯಲ್ಲಿರುವ ಎಲ್ಲಾ ಪ್ರಿಯರೂ, ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದು:</verse>
				<verse number="3">ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಇರಲಿ.</verse>
				<verse number="4">ಈ ಯೇಸುವೇ ನಮ್ಮನ್ನು ಈಗಿನ ದುಷ್ಟ ಯುಗದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗಾಗಿ ತಮ್ಮನ್ನೇ ಬಲಿಯಾಗಿ ಒಪ್ಪಿಸಿದರು.</verse>
				<verse number="5">ದೇವರಿಗೆ ಯುಗಯುಗಾಂತರಗಳಿಗೂ ಮಹಿಮೆಯಾಗಲಿ. ಆಮೆನ್.</verse>
				<verse number="6">ಕ್ರಿಸ್ತ ಯೇಸುವಿನ ಕೃಪೆಯಲ್ಲಿ ನಿಮ್ಮನ್ನು ಕರೆದ ದೇವರನ್ನು ನೀವು ಇಷ್ಟು ಬೇಗನೆ ಬಿಟ್ಟು ಬೇರೆ ಸುವಾರ್ತೆಯ ಕಡೆಗೆ ತಿರುಗಿದಿರೆಂದು ನಾನು ಆಶ್ಚರ್ಯಪಡುತ್ತೇನೆ.</verse>
				<verse number="7">ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಗಲಿಬಿಲಿಗೆ ಒಳಪಡಿಸಿ, ಕ್ರಿಸ್ತ ಯೇಸುವಿನ ಸುವಾರ್ತೆಯನ್ನು ವಕ್ರಪಡಿಸಬೇಕೆಂದು ಪ್ರಯತ್ನಿಸುತ್ತಿದ್ದಾರೆ.</verse>
				<verse number="8">ಆದರೂ ನಾವು ನಿಮಗೆ ಸಾರಿದ ಸುವಾರ್ತೆಯಲ್ಲದೆ ಬೇರೊಂದನ್ನು ನಾವೇ ಆಗಲಿ, ಪರಲೋಕದೊಳಗಿಂದ ಬಂದ ದೇವದೂತನೇ ಆಗಲಿ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.</verse>
				<verse number="9">ನೀವು ಸ್ವೀಕರಿಸಿದ ಸುವಾರ್ತೆಯನ್ನಲ್ಲದೆ ಯಾವನಾದರೂ ಬೇರೆ ಸುವಾರ್ತೆಯನ್ನು ನಿಮಗೆ ಸಾರಿದರೆ, ಅವನು ಶಾಪಗ್ರಸ್ತನಾಗಲಿ ಎಂದು ಮೊದಲು ಹೇಳಿದಂತೆಯೇ ಈಗಲೂ ನಾನು ಪುನಃ ಹೇಳುತ್ತೇನೆ.</verse>
				<verse number="10">ನಾನು ಈಗ ಯಾರ ಅನುಮೋದವನ್ನು ಗಳಿಸಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸಲು ಪ್ರಯತಿಸುತ್ತಿದ್ದೇನೋ? ಇನ್ನೂ ಮನುಷ್ಯರನ್ನೇ ಮೆಚ್ಚಿಸುವವನಾಗಿದ್ದರೆ, ನಾನು ಕ್ರಿಸ್ತ ಯೇಸುವಿನ ದಾಸನಾಗಿರಲಾರೆ.</verse>
				<verse number="11">ಪ್ರಿಯರೇ, ನಾನು ಸಾರಿದ ಸುವಾರ್ತೆಯು ಮಾನವೀಯವಾದದ್ದಲ್ಲವೆಂದು ನಿಮಗೆ ತಿಳಿಯಪಡಿಸುತ್ತೇನೆ.</verse>
				<verse number="12">ನಾನು ಅದನ್ನು ಯಾವ ಮನುಷ್ಯನಿಂದಲೂ ಪಡೆಯಲಿಲ್ಲ, ನನಗೆ ಯಾವ ಮನುಷ್ಯನೂ ಉಪದೇಶಿಸಲಿಲ್ಲ, ಆದರೆ ನಾನು ಅದನ್ನು ಕ್ರಿಸ್ತ ಯೇಸುವಿನ ಪ್ರಕಟನೆಯಿಂದಲೇ ಸ್ವೀಕರಿಸಿಕೊಂಡೆನು.</verse>
				<verse number="13">ನಾನು ಯೆಹೂದ್ಯ ವಿಶ್ವಾಸದಲ್ಲಿದ್ದಾಗ ನನ್ನ ಹಿಂದಿನ ನಡತೆಯನ್ನು ನೀವು ಕೇಳಿದ್ದೀರಷ್ಟೇ. ನಾನು ದೇವರ ಸಭೆಯನ್ನು ಮಿತಿಮೀರಿ ಹಿಂಸೆಪಡಿಸಿ ಹಾಳುಮಾಡಲು ಯತ್ನಿಸುತ್ತಿದ್ದೆನು.</verse>
				<verse number="14">ಇದಲ್ಲದೆ ನಾನು ನನ್ನ ಪಿತೃಗಳ ಸಂಪ್ರದಾಯಗಳಲ್ಲಿ ಅತ್ಯಂತ ಅಭಿಮಾನವುಳ್ಳವನಾಗಿ ಸಮಕಾಲಿಕರಾದ ನನ್ನ ಜನರೊಳಗೆ ಅನೇಕರಿಗಿಂತ ಯೆಹೂದ್ಯ ವಿಶ್ವಾಸದಲ್ಲಿ ಎಷ್ಟೋ ಪ್ರಗತಿಯನ್ನು ಹೊಂದಿದವನಾಗಿದ್ದೆನು.</verse>
				<verse number="15">ಆದರೆ ದೇವರು ನಾನು ನನ್ನ ತಾಯಿಯ ಗರ್ಭದಲ್ಲಿದ್ದಾಗಲೇ ನನ್ನನ್ನು ಪ್ರತ್ಯೇಕಿಸಿ, ತಮ್ಮ ಕೃಪೆಯ ಮೂಲಕ ನನ್ನನ್ನು ಕರೆದು,</verse>
				<verse number="16">ದೇವರು ತಮ್ಮ ಪುತ್ರನನ್ನು ನನ್ನಲ್ಲಿ ಪ್ರಕಟಿಸಿ, ಯೆಹೂದ್ಯರಲ್ಲದವರಲ್ಲಿ ಸುವಾರ್ತೆಯನ್ನು ಸಾರಬೇಕೆಂದು ಮನಸ್ಸು ಮಾಡಿದರು. ಕೂಡಲೇ ದೇವರ ಪುತ್ರ ಆಗಿರುವವರ ಪ್ರಕಟಣೆಯ ತರುವಾಯ ನಾನು ಯಾವ ಮನುಷ್ಯರನ್ನು ವಿಚಾರಿಸಲಿಲ್ಲ.</verse>
				<verse number="17">ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ, ನಾನು ಅರೇಬಿಯಾಕ್ಕೆ ಹೋದೆನು. ಅನಂತರ ಪುನಃ ದಮಸ್ಕಕ್ಕೆ ಹಿಂದಿರುಗಿದೆನು.</verse>
				<verse number="18">ಮೂರು ವರ್ಷಗಳ ನಂತರವೇ ನಾನು ಕೇಫನನ್ನು ಪರಿಚಯಮಾಡಿಕೊಳ್ಳಲು ಯೆರೂಸಲೇಮಿಗೆ ಹೋಗಿ ಅವನೊಂದಿಗೆ ಹದಿನೈದು ದಿವಸ ಇದ್ದೆನು.</verse>
				<verse number="19">ಆದರೆ ಕರ್ತ ಯೇಸುವಿನ ಸಹೋದರನಾದ ಯಾಕೋಬನನ್ನಲ್ಲದೆ ಅಪೊಸ್ತಲರಲ್ಲಿ ಬೇರೆ ಯಾರನ್ನೂ ನಾನು ಕಾಣಲಿಲ್ಲ.</verse>
				<verse number="20">ಈಗ ನಾನು ನಿಮಗೆ ಬರೆಯುತ್ತಿರುವ ವಿಷಯಗಳು ಸುಳ್ಳಲ್ಲ ಎಂದು ದೇವರ ಮುಂದೆ ನಾನು ನಿಶ್ಚಯವಾಗಿ ನಿಮಗೆ ಹೇಳುತ್ತೇನೆ.</verse>
				<verse number="21">ಆಮೇಲೆ ಸಿರಿಯಾ ಮತ್ತು ಕಿಲಿಕ್ಯ ಪ್ರಾಂತಗಳಿಗೆ ಬಂದೆನು.</verse>
				<verse number="22">ಆಗ ಕ್ರಿಸ್ತ ಯೇಸುವಿನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ.</verse>
				<verse number="23">ಆದರೆ ಅವರು, “ಹಿಂದೊಮ್ಮೆ ನಮ್ಮನ್ನು ಹಿಂಸಿಸುತ್ತಿದ್ದ ಇವನು, ತಾನು ನಾಶಮಾಡಲು ಪ್ರಯತ್ನಿಸಿದ್ದ ವಿಶ್ವಾಸವನ್ನೇ ಈಗ ಪ್ರಸಂಗಿಸುತ್ತಿದ್ದಾನೆ,” ಎಂಬುದನ್ನು ಮಾತ್ರ ಕೇಳಿದ್ದರು.</verse>
				<verse number="24">ಅವರು ನನ್ನ ದೆಸೆಯಿಂದ ದೇವರನ್ನು ಕೊಂಡಾಡಿದರು.</verse>
			</chapter>
			<chapter number="2">
				<verse number="1">ಹದಿನಾಲ್ಕು ವರ್ಷಗಳಾದ ಮೇಲೆ ನಾನು ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ಪುನಃ ಯೆರೂಸಲೇಮಿಗೆ ಹೋದೆನು.</verse>
				<verse number="2">ನಾನು ನನಗೆ ದೊರೆತ ಪ್ರಕಟನೆಗೆ ಅನುಸಾರವಾಗಿ ಅಲ್ಲಿಗೆ ಹೋದೆನು. ಅಲ್ಲಿ ಇರುವ ಸಭೆಗೆ ಹೋಗಿ ಯೆಹೂದ್ಯರಲ್ಲದ ಜನರಿಗೆ ನಾನು ಸಾರುವ ಸುವಾರ್ತೆಯ ಬಗ್ಗೆ ವಿವರಿಸಿದೆನು. ಅಲ್ಲಿರುವ ಗಣ್ಯನಾಯಕರಿಗೆ ವೈಯಕ್ತಿಕವಾಗಿ ಅದರ ಬಗ್ಗೆ ವರದಿಮಾಡಿದೆನು. ಏಕೆಂದರೆ ನಾನು ಮಾಡಿದ ಸೇವೆ ಮತ್ತು ಮುಂದೆ ಮಾಡಲಿರುವ ಸೇವೆಯು ನಿಷ್ಫಲವಾಗಬಾರದೆಂಬ ಕಾರಣಕ್ಕಾಗಿ ಹೀಗೆ ಮಾಡಿದೆ.</verse>
				<verse number="3">ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಅವನನ್ನು ಬಲಾತ್ಕಾರ ಮಾಡಲಿಲ್ಲ.</verse>
				<verse number="4">ಆದರೆ ರಹಸ್ಯವಾಗಿ ಒಳಗೆ ಬಂದಿದ್ದ ಸುಳ್ಳು ವಿಶ್ವಾಸಿಗಳು ನಮ್ಮನ್ನು ದಾಸತ್ವದಲ್ಲಿ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮ ಸ್ವಾತಂತ್ರ್ಯವನ್ನು ಗೂಢವಾಗಿ ವಿಚಾರಿಸಲು ಬಂದಿದ್ದರು.</verse>
				<verse number="5">ಸುವಾರ್ತೆಯ ಸತ್ಯವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂದು ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲು ಒಪ್ಪಲಿಲ್ಲ.</verse>
				<verse number="6">ಅಲ್ಲಿದ್ದ ಸಭೆಯ ನಾಯಕರೂ ಸಹ ನನ್ನ ಸಂದೇಶದ ಬಗ್ಗೆ ನನಗೆ ಏನೂ ಹೇಳಲಿಲ್ಲ. ಅವರು ಎಂಥವರು ಎಂಬುದು ನನಗೆ ಮುಖ್ಯವಲ್ಲ; ಏಕೆಂದರೆ, ದೇವರು ಪಕ್ಷಪಾತಿಯಲ್ಲ.</verse>
				<verse number="7">ಅದಕ್ಕೆ ಬದಲಾಗಿ, ಯೆಹೂದ್ಯರಿಗೆ ಸುವಾರ್ತೆ ಸಾರುವುದು ಪೇತ್ರನಿಗೆ ಒಪ್ಪಿಸಿಕೊಟ್ಟಂತೆಯೇ, ಯೆಹೂದ್ಯರಲ್ಲದವರಿಗೆ ಸುವಾರ್ತೆ ಸಾರುವುದು ನನಗೆ ಒಪ್ಪಿಸಲಾಯಿತು ಎಂಬುದನ್ನು ಸಭೆಯ ನಾಯಕರು ಸಹ ಗ್ರಹಿಸಿಕೊಂಡರು.</verse>
				<verse number="8">ಏಕೆಂದರೆ, ಯೆಹೂದ್ಯರಿಗೆ ಅಪೊಸ್ತಲನಾಗಿರುವ ಪೇತ್ರನಲ್ಲಿ ಕಾರ್ಯಮಾಡಿದ ದೇವರೇ, ಯೆಹೂದ್ಯರಲ್ಲದವರಿಗೆ ನಾನು ಅಪೊಸ್ತಲನಾಗಿರಲು ನನ್ನಲ್ಲಿ ಕಾರ್ಯಮಾಡಿದರು.</verse>
				<verse number="9">ಸಭೆಯ ಸ್ತಂಭಗಳಂತಿರುವ ನಾಯಕರಾದ ಯಾಕೋಬ, ಪೇತ್ರ ಹಾಗೂ ಯೋಹಾನರು ನನಗೆ ಕೊಡಲಾದ ಕೃಪೆಯನ್ನು ಗ್ರಹಿಸಿಕೊಂಡರು. ಆಗ ಅವರು, ನನಗೂ ಬಾರ್ನಬನಿಗೂ ಅನ್ಯೋನ್ಯತೆಯ ಬಲಗೈಯನ್ನು ಕೊಟ್ಟರು. ಹೀಗೆ ನಾವು ಯೆಹೂದ್ಯರಲ್ಲದವರ ಬಳಿಗೂ ಅವರು ಯೆಹೂದ್ಯರ ಬಳಿಗೂ ಹೋಗುವಂತೆ ತೀರ್ಮಾನವಾಯಿತು.</verse>
				<verse number="10">ಅವರು ನಾವು ಬಡವರನ್ನು ಜ್ಞಾಪಕಮಾಡಿಕೊಳ್ಳಬೇಕೆಂಬ ಒಂದು ವಿಷಯವನ್ನು ಮಾತ್ರ ಕೇಳಿಕೊಂಡರು. ನಾನು ಇದನ್ನು ಮಾಡುವುದರಲ್ಲಿ ಆಸಕ್ತನಾಗಿದ್ದೆನು.</verse>
				<verse number="11">ಕೇಫನು ಅಂತಿಯೋಕ್ಯ ಎಂಬ ಪಟ್ಟಣಕ್ಕೆ ಬಂದಾಗ ಅವನು ತಪ್ಪುಮಾಡಿದವನಾಗಿ ಇದ್ದುದರಿಂದ, ನಾನು ಅವನನ್ನು ಬಹಿರಂಗವಾಗಿ ಎದುರಿಸಿದೆನು.</verse>
				<verse number="12">ಏಕೆಂದರೆ ಯಾಕೋಬನ ಕಡೆಯಿಂದ ಕೆಲವರು ಬರುವುದಕ್ಕೆ ಮುಂಚೆ ಪೇತ್ರನು ಯೆಹೂದ್ಯರಲ್ಲದವರೊಡನೆ ಊಟಮಾಡುತ್ತಿದ್ದನು. ಅವರು ಬಂದ ಮೇಲೆ ಯೆಹೂದ್ಯರಿಗೆ ಅವನು ಭಯಪಟ್ಟು ಯೆಹೂದ್ಯರಲ್ಲದವರಿಂದ ತನ್ನನ್ನು ಪ್ರತ್ಯೇಕಿಸಿಕೊಂಡನು.</verse>
				<verse number="13">ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಕಪಟಮಾಡಿದರು. ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಒಳಗಾದನು.</verse>
				<verse number="14">ಆದರೆ ಅವರು ಸುವಾರ್ತೆಯ ಸತ್ಯದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ, “ನೀನು ಯೆಹೂದ್ಯನಾಗಿದ್ದು, ಯೆಹೂದ್ಯರಂತೆ ಜೀವಿಸದೆ ಯೆಹೂದ್ಯರಲ್ಲದವರಂತೆ ಜೀವಿಸಿ, ಯೆಹೂದ್ಯರಲ್ಲದವರು ಯೆಹೂದ್ಯರಂತೆ ಜೀವಿಸಬೇಕೆಂದು ನೀನು ಒತ್ತಾಯ ಮಾಡುವುದು ಹೇಗೆ?” ಎಂದು ಕೇಳಿದೆ.</verse>
				<verse number="15">“ನಾವಂತೂ ಹುಟ್ಟು ಯೆಹೂದ್ಯರು, ಪಾಪಿಗಳೆಂದು ಕರೆಯಲಾಗುವ ಯೆಹೂದ್ಯರಲ್ಲದವರಲ್ಲ.</verse>
				<verse number="16">ಒಬ್ಬ ವ್ಯಕ್ತಿ ಮೋಶೆಯ ನಿಯಮದ ಕ್ರಿಯೆಗಳಿಂದ ನೀತಿವಂತನಾಗುವುದಿಲ್ಲ. ಆದರೆ ಕ್ರಿಸ್ತ ಯೇಸುವನ್ನು ನಂಬುವುದರಿಂದಲೇ ನೀತಿವಂತನಾಗುತ್ತಾನೆ ಎಂದು ನಮಗೆ ತಿಳಿದಿದೆ. ನಾವು ಸಹ ಮೋಶೆಯ ನಿಯಮದ ಕ್ರಿಯೆಗಳಿಂದಲ್ಲ, ಕ್ರಿಸ್ತ ಯೇಸುವಿನ ನಂಬಿಕೆಯ ಮೂಲಕ ನೀತಿವಂತರಾವುದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟೆವು. ಏಕೆಂದರೆ, ಮೋಶೆಯ ನಿಯಮದ ಕ್ರಿಯೆಗಳಿಂದ ಯಾರೂ ನೀತಿವಂತರಾಗುವುದಿಲ್ಲ.</verse>
				<verse number="17">“ಆದರೆ, ನಾವು ಕ್ರಿಸ್ತ ಯೇಸುವಿನಲ್ಲಿ ನೀತಿವಂತರಾಗಲು ಪ್ರಯತ್ನಿಸುವ ನಾವೂ ಪಾಪಿಗಳಾಗಿ ಇರುವುದಾದರೆ, ಕ್ರಿಸ್ತ ಯೇಸು ಪಾಪಕ್ಕೆ ಪ್ರೋತ್ಸಾಹ ನೀಡಿದ ಹಾಗಾಗುವುದೋ? ಎಂದಿಗೂ ಇಲ್ಲ.</verse>
				<verse number="18">ನಾನು ಕೆಡವಿದ್ದನ್ನೇ ಪುನಃ ನಾನೇ ಕಟ್ಟಿದರೆ, ನನ್ನನ್ನು ನಿಯಮ ಉಲ್ಲಂಘಿಸಿದವನು ಎಂದು ರುಜುಪಡಿಸಿಕೊಳ್ಳುತ್ತೇನಲ್ಲಾ?</verse>
				<verse number="19">“ನಾನಾದರೋ ದೇವರಿಗಾಗಿ ಜೀವಿಸುವುದಕ್ಕೋಸ್ಕರ, ನಿಯಮದ ಮೂಲಕ, ನಿಯಮದ ಪಾಲಿಗೆ ಸತ್ತವನಾಗಿದ್ದೇನೆ.</verse>
				<verse number="20">ಕ್ರಿಸ್ತ ಯೇಸುವಿನೊಂದಿಗೆ ನಾನೂ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ. ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತ ಯೇಸುವೇ ನನ್ನಲ್ಲಿ ಜೀವಿಸುತ್ತಾರೆ. ನನ್ನನ್ನು ಪ್ರೀತಿಸಿ ನನಗೋಸ್ಕರ ತಮ್ಮನ್ನೇ ಒಪ್ಪಿಸಿಕೊಟ್ಟ ದೇವಪುತ್ರ ಆಗಿರುವವರ ನಂಬಿಕೆಯಲ್ಲಿಯೇ ಈಗ ನಾನು ಈ ಶರೀರದಲ್ಲಿ ಜೀವಿಸುತ್ತಿದ್ದೇನೆ.</verse>
				<verse number="21">ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಏಕೆಂದರೆ ನಿಯಮದ ಮೂಲಕ ನೀತಿಯು ಬರುವುದಾದರೆ, ಕ್ರಿಸ್ತ ಯೇಸು ಕಾರಣವಿಲ್ಲದೆ ಸತ್ತಂತಾಯಿತು!”</verse>
			</chapter>
			<chapter number="3">
				<verse number="1">ಬುದ್ಧಿಯಿಲ್ಲದ ಗಲಾತ್ಯದವರೇ, ನಿಮಗೆ ಮಾಟಮಾಡಿಸಿದವರು ಯಾರು? ಯೇಸು ಕ್ರಿಸ್ತರು ಶಿಲುಬೆಗೆ ಹಾಕಿಸಿಕೊಂಡದ್ದನ್ನು ನಾನು ನಿಮ್ಮ ಕಣ್ಣೆದುರಿನಲ್ಲಿಯೇ ಚಿತ್ರೀಕರಿಸಲಿಲ್ಲವೆ?</verse>
				<verse number="2">ಇದೊಂದನ್ನು ಮಾತ್ರ ನಿಮ್ಮಿಂದ ತಿಳಿಯಬಯಸುತ್ತೇನೆ. ನೀವು ಪವಿತ್ರ ಆತ್ಮರನ್ನು ಹೊಂದಿದ್ದು ನಿಯಮದ ಕ್ರಿಯೆಯಿಂದಲೋ? ಇಲ್ಲವೆ ಕೇಳಿದ್ದನ್ನು ನಂಬಿದ್ದರಿಂದಲೋ?</verse>
				<verse number="3">ನೀವು ಇಷ್ಟು ಬುದ್ಧಿಯಿಲ್ಲದವರಾಗಿದ್ದೀರಾ? ನೀವು ಪವಿತ್ರ ಆತ್ಮರಲ್ಲಿ ಪ್ರಾರಂಭಿಸಿ ಈಗ ಮಾನವೀಯವಾಗಿ ಪರಿಪೂರ್ಣರಾಗಬೇಕೆಂದ್ದೀರಾ?</verse>
				<verse number="4">ನೀವು ಎಷ್ಟೋ ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವಾಯಿತೋ?</verse>
				<verse number="5">ನಿಜವಾಗಿಯೂ ವ್ಯರ್ಥವಾಯಿತು. ದೇವರು ಪವಿತ್ರ ಆತ್ಮರನ್ನು ನಿಮಗೆ ಕೊಟ್ಟದ್ದು ಮತ್ತು ನಿಮ್ಮಲ್ಲಿ ಅದ್ಭುತಕಾರ್ಯಗಳನ್ನು ನಡೆಸಿದ್ದು ನಿಯಮದ ಕ್ರಿಯೆಗಳಿಂದಲೋ ಅಥವಾ ನೀವು ಕೇಳಿ ನಂಬಿದ್ದರಿಂದಲೋ?</verse>
				<verse number="6">ಈ ರೀತಿಯಾಗಿ, “ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅದು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು.”</verse>
				<verse number="7">ಆದ್ದರಿಂದ ನಂಬುವವರೇ, ಅಬ್ರಹಾಮನ ಮಕ್ಕಳೆಂದು ನೀವು ಅರ್ಥಮಾಡಿಕೊಳ್ಳಿರಿ.</verse>
				<verse number="8">ಯೆಹೂದ್ಯರಲ್ಲದವರನ್ನು ನಂಬಿಕೆಯಿಂದಲೇ ದೇವರು ನೀತಿವಂತರನ್ನಾಗಿ ಮಾಡುವರು ಎಂದು ಪವಿತ್ರ ವೇದವು ಮೊದಲೇ ಕಂಡು, “ನಿನ್ನ ಮೂಲಕ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂಬ ಸುವಾರ್ತೆಯನ್ನು ಅಬ್ರಹಾಮನಿಗೆ, ಮುಂಚಿತವಾಗಿಯೇ ಸಾರಿತು.</verse>
				<verse number="9">ಆದ್ದರಿಂದ, ದೇವರನ್ನು ನಂಬುವ ಎಲ್ಲರೂ ಅಬ್ರಹಾಮನು ಆಶೀರ್ವಾದ ಹೊಂದಿದ ಹಾಗೆಯೇ ಆಶೀರ್ವಾದ ಹೊಂದುವರು.</verse>
				<verse number="10">ಮೋಶೆಯ ನಿಯಮದ ಕ್ರಿಯೆಗಳನ್ನು ಆಶ್ರಯಿಸಿಕೊಳ್ಳುವವರೆಲ್ಲರೂ ಶಾಪಾಧೀನರಾಗಿದ್ದಾರೆ. ಏಕೆಂದರೆ, “ಮೋಶೆಯ ನಿಯಮದ ಗ್ರಂಥದಲ್ಲಿ ಬರೆದಿರುವವುಗಳನ್ನೆಲ್ಲಾ ನಿರಂತರವಾಗಿ ಕೈಗೊಳ್ಳದಿರುವ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿದೆ.</verse>
				<verse number="11">ಇದಲ್ಲದೆ ನಿಯಮದಿಂದ ದೇವರ ಮುಂದೆ ಯಾರೂ ನೀತಿವಂತರೆಂಬ ನಿರ್ಣಯವನ್ನು ಹೊಂದುವುದಿಲ್ಲವೆಂಬುದು ಸ್ಪಷ್ಟವಾಗಿದೆ. ಏಕೆಂದರೆ, “ನೀತಿವಂತನು ನಂಬಿಕೆಯಿಂದಲೇ ಬದುಕುವನು.”</verse>
				<verse number="12">ನಿಯಮವು ನಂಬಿಕೆಯನ್ನು ಆಧಾರಗೊಂಡದ್ದಲ್ಲ. ಆದರೆ, “ನಿಯಮಗಳ ಕ್ರಿಯೆಗಳನ್ನು ಮಾಡುವವನು ಅವುಗಳ ಮೂಲಕ ಬದುಕುವನು.”</verse>
				<verse number="13">ಪವಿತ್ರ ವೇದದಲ್ಲಿ, “ಮರಕ್ಕೆ ತೂಗುಹಾಕಲಾದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ ಕ್ರಿಸ್ತ ಯೇಸು ಮರಕ್ಕೆ ತೂಗುಹಾಕಲಾಗಿ ನಮಗೋಸ್ಕರ ಶಾಪಗ್ರಸ್ಥರಾಗಿ ನಿಯಮದ ಶಾಪದೊಳಗಿಂದ ನಮ್ಮನ್ನು ವಿಮೋಚಿಸಿದರು.</verse>
				<verse number="14">ಅಬ್ರಹಾಮನ ಆಶೀರ್ವಾದವು ಕ್ರಿಸ್ತ ಯೇಸುವಿನ ಮೂಲಕ ಯೆಹೂದ್ಯರಲ್ಲದವರಿಗೆ ಉಂಟಾಗಿ, ನಂಬಿಕೆಯ ಮೂಲಕ ವಾಗ್ದಾನದ ಪವಿತ್ರಾತ್ಮರನ್ನು ನಾವು ಪಡೆದುಕೊಳ್ಳುವುದಕ್ಕಾಗಿಯೇ ದೇವರು ನಮ್ಮನ್ನು ವಿಮೋಚಿಸಿದರು.</verse>
				<verse number="15">ಪ್ರಿಯರೇ, ನಾನು ದಿನನಿತ್ಯದ ವ್ಯವಹಾರದಂತೆ ಮಾತನಾಡುತ್ತಿದ್ದೇನೆ. ಮತ್ತೊಬ್ಬನೊಡನೆ ಯಾರಾದರೂ ಒಡಂಬಡಿಕೆಯನ್ನು ಮಾಡಿಕೊಂಡು ಅದನ್ನು ಸ್ಥಿರಪಡಿಸಿದ ಮೇಲೆ ಯಾರೂ ಅದನ್ನು ರದ್ದು ಮಾಡುವುದಿಲ್ಲ, ಇಲ್ಲವೆ ಕೂಡಿಸುವುದಿಲ್ಲ.</verse>
				<verse number="16">ಹಾಗೆಯೇ ಅಬ್ರಹಾಮನಿಗೂ ಅವನ ಸಂತತಿಗೂ ವಾಗ್ದಾನಗಳು ಮಾಡಲಾದವು. ಅದರಲ್ಲಿ, “ನಿನ್ನ ಸಂತತಿಗಳಿಗೆ,” ಎಂದು ಹೇಳಿ ಅನೇಕರನ್ನು ಸೂಚಿಸದೆ, “ನಿನ್ನ ಸಂತತಿಗೆ,” ಎಂದು ಹೇಳಿದ ಒಬ್ಬರನ್ನೇ ಸೂಚಿಸಿದೆ. ಆ ಒಬ್ಬ ವ್ಯಕ್ತಿ ಕ್ರಿಸ್ತ ಯೇಸುವೇ.</verse>
				<verse number="17">ನಾನು ಹೇಳುವ ಮಾತಿನ ತಾತ್ಪರ್ಯ ಏನೆಂದರೆ, ದೇವರು ಸ್ಥಿರಪಡಿಸಿ ಮುಗಿಸಿದ ಒಡಂಬಡಿಕೆಯನ್ನು ನಾನೂರ ಮೂವತ್ತು ವರ್ಷಗಳ ತರುವಾಯ ಬಂದ ಮೋಶೆಯ ನಿಯಮವು ಆ ವಾಗ್ದಾನವನ್ನು ರದ್ದುಪಡಿಸಲಾಗದು ಮತ್ತು ವ್ಯರ್ಥಪಡಿಸಲಾಗದು.</verse>
				<verse number="18">ಏಕೆಂದರೆ ಆ ಬಾಧ್ಯತೆಯು ನಿಯಮದ ಪ್ರಕಾರವಾಗಿದ್ದರೆ, ಅದು ಇನ್ನು ವಾಗ್ದಾನದ ಮೇಲೆ ಆಧಾರವಾದದ್ದಲ್ಲ. ಆದರೆ ದೇವರು ತಮ್ಮ ಕೃಪೆಯಿಂದ ಅಬ್ರಹಾಮನಿಗೆ ವಾಗ್ದಾನದ ಮೂಲಕವೇ ಆ ಬಾಧ್ಯತೆಯನ್ನು ಕೊಟ್ಟಿದ್ದಾರೆ.</verse>
				<verse number="19">ಹಾಗಾದರೆ ಮೋಶೆಯ ನಿಯಮವನ್ನು ಏಕೆ ಕೊಡಲಾಯಿತು? ಅಪರಾಧಗಳ ಅರಿವನ್ನು ಮೂಡಿಸುವುದಕ್ಕಾಗಿ, ನಿಯಮವು ಸೇರಿಸಲಾಯಿತು. ಇದು ಆ ಸಂತತಿಯಾದಾತನು ಬರುವ ವಾಗ್ದಾನದ ತನಕ ಮಾತ್ರವಾಗಿರುವುದು. ಹೀಗೆ ನಿಯಮವು ದೇವದೂತರ ಮುಖಾಂತರ ಮಧ್ಯಸ್ಥನಾದ ಮೋಶೆಯ ಕೈಯಲ್ಲಿ ಕೊಡಲಾಯಿತು.</verse>
				<verse number="20">ಒಂದು ಪಕ್ಷಕ್ಕಿಂತಲೂ ಹೆಚ್ಚಿನವನಾಗಿದ್ದರೆ ಮಾತ್ರ ಮಧ್ಯಸ್ಥನ ಅಗತ್ಯವಿರುವುದು; ದೇವರಾದರೋ ಒಬ್ಬರೇ.</verse>
				<verse number="21">ಹಾಗಾದರೆ ನಿಯಮವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಆಗಬಾರದು! ಕೊಡಲಾಗಿದ್ದ ನಿಯಮವು ಒಂದು ವೇಳೆ ಜೀವವನ್ನು ನೀಡುವುದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ, ನಿಶ್ಚಯವಾಗಿಯೂ ಮೋಶೆಯ ನಿಯಮದಿಂದ ನೀತಿವಂತರಾಗುತ್ತಿದ್ದೆವು.</verse>
				<verse number="22">ಆದರೆ ಸಮಸ್ತವೂ ಪಾಪದ ಅಧೀನಕ್ಕೆ ಒಳಗಾಯಿತು ಎಂದು ಪವಿತ್ರ ವೇದ ಸ್ಪಷ್ಟೀಕರಿಸುತ್ತದೆ. ಇದು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬರಿಗೂ ಮಾಡಿದ ವಾಗ್ದಾನವು ಅವರ ನಂಬಿಕೆಯ ಆಧಾರವಾಗಿ ಕೊಡಲಾಗುತ್ತದೆ.</verse>
				<verse number="23">ನಂಬಿಕೆ ಬರುವುದಕ್ಕೆ ಮುಂಚೆ ನಾವು ನಿಯಮದ ಅಧೀನದಲ್ಲಿ ಇದ್ದೆವು. ಬರಲಿರುವ ಆ ನಂಬಿಕೆಯು ಪ್ರಕಟವಾಗುವ ತನಕ ನಾವು ಸೆರೆಯಾದವರಂತೆ ಇದ್ದೆವು.</verse>
				<verse number="24">ಹೀಗಿರಲಾಗಿ ನಿಯಮವು ನಮ್ಮ ಪೋಷಕನಂತಿತ್ತು. ನಾವು ನಂಬಿಕೆಯ ಮೂಲಕ ನೀತಿವಂತರಾಗುವುದಕ್ಕಾಗಿ ಕ್ರಿಸ್ತ ಯೇಸುವಿನ ಬಳಿಗೆ ತರುವ ತನಕ ನಮ್ಮನ್ನು ಪೋಷಿಸುತ್ತದೆ.</verse>
				<verse number="25">ಆದರೆ ಈಗ ನಂಬಿಕೆಯು ಬಂದಿರುವುದರಿಂದ, ಇನ್ನೆಂದಿಗೂ ನಾವು ಪೋಷಕ ಎಂಬ ನಿಯಮದ ಕೆಳಗೆ ಇಲ್ಲ.</verse>
				<verse number="26">ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.</verse>
				<verse number="27">ಹೇಗೆಂದರೆ, ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿರಿ.</verse>
				<verse number="28">ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.</verse>
				<verse number="29">ಆದರೆ ನೀವು ಕ್ರಿಸ್ತನವರಾಗಿದ್ದರೆ, ಅಬ್ರಹಾಮನ ಸಂತತಿಯವರಾಗಿದ್ದೀರಿ ಮಾತ್ರವಲ್ಲದೆ ವಾಗ್ದಾನಕ್ಕನುಸಾರವಾಗಿ ವಾರಸುದಾರರೂ ಆಗಿದ್ದೀರಿ.</verse>
			</chapter>
			<chapter number="4">
				<verse number="1">ಆದರೆ ನಾನು ಹೇಳುವುದೇನೆಂದರೆ, ವಾರಸುದಾರನು ತಾನು ಇಡೀ ಆಸ್ತಿಗೆಲ್ಲಾ ಧಣಿಯಾಗಿದ್ದರೂ ಬಾಲಕನಾಗಿರುವ ತನಕ ಅವನಿಗೂ ದಾಸನಿಗೂ ವ್ಯತ್ಯಾಸವಿರುವುದಿಲ್ಲ.</verse>
				<verse number="2">ಆದರೆ ಅವನ ತಂದೆಯು ಮುಂಚಿತವಾಗಿ ನೇಮಿಸಿದ ದಿನದವರೆಗೂ ಅವನು ಪೋಷಕರ ಹಾಗೂ ಆಡಳಿತಗಾರರ ಕೈಕೆಳಗಿರುವನು.</verse>
				<verse number="3">ಅದರಂತೆಯೇ ನಾವು ಬಾಲಕರಾಗಿದ್ದಾಗ ಲೋಕದ ಮೂಲಪಾಠಗಳಿಗೆ ಗುಲಾಮರಾಗಿದ್ದೆವು.</verse>
				<verse number="4">ಆದರೆ ನಿಯಮಿತ ಕಾಲವು ಪರಿಪೂರ್ಣವಾದಾಗ, ದೇವರು ತಮ್ಮ ಮಗನನ್ನು ಸ್ತ್ರೀಯಿಂದ ಹುಟ್ಟಿದವನಾಗಿಯೂ ನಿಯಮಕ್ಕೆ ಒಳಗಾದವನನ್ನಾಗಿಯೂ ಕಳುಹಿಸಿಕೊಟ್ಟರು.</verse>
				<verse number="5">ಹೀಗೆ ದೇವರು ನಿಯಮಕ್ಕೆ ಒಳಗಾದ ನಮ್ಮನ್ನು ವಿಮೋಚಿಸಿ, ನಾವು ಪುತ್ರರ ಸ್ಥಾನವನ್ನು ಹೊಂದುವಂತೆ ಮಾಡಿದರು.</verse>
				<verse number="6">ನೀವು ದೇವರ ಪುತ್ರರಾಗಿರುವುದರಿಂದ, ದೇವರು ತಮ್ಮ ಪುತ್ರ ಆಗಿರುವವರ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿ, “ಅಪ್ಪಾ ತಂದೆಯೇ!” ಎಂದು ಕರೆಯುವಂತೆ ಮಾಡಿದ್ದಾರೆ.</verse>
				<verse number="7">ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ ಪುತ್ರನಾಗಿದ್ದೀ. ನೀನು ದೇವರ ಮಗು ಎಂದ ಮೇಲೆ ದೇವರ ಮೂಲಕ ವಾರಸುದಾರನೂ ಆಗಿದ್ದೀ.</verse>
				<verse number="8">ಮುಂಚೆ ನೀವು ದೇವರನ್ನು ಅರಿಯದವರಾಗಿದ್ದಾಗ, ಸ್ವಾಭಾವಿಕವಾಗಿ ದೇವರಲ್ಲದವುಗಳಿಗೆ ನೀವು ಗುಲಾಮರಾಗಿದ್ದೀರಿ.</verse>
				<verse number="9">ಈಗಲಾದರೋ ನೀವು ದೇವರನ್ನು ಅರಿತುಕೊಂಡಿದ್ದೀರಿ. ನಿಜವಾಗಿ ಹೇಳಬೇಕಾದರೆ, ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲಪಾಠಗಳಿಗೆ ಪುನಃ ಗುಲಾಮರಾಗಬೇಕೆಂದು ಅಪೇಕ್ಷಿಸಿ, ಅವುಗಳಿಗೆ ನೀವು ತಿರುಗಿಕೊಳ್ಳುವುದು ಹೇಗೆ?</verse>
				<verse number="10">ನೀವು ದಿನಗಳನ್ನೂ ಮಾಸಗಳನ್ನೂ ಕಾಲಗಳನ್ನೂ ಸಂವತ್ಸರಗಳನ್ನೂ ಆಚರಿಸುತ್ತೀರಿ.</verse>
				<verse number="11">ನಾವು ನಿಮ್ಮ ಮಧ್ಯದಲ್ಲಿ ಪ್ರಯಾಸಪಟ್ಟದ್ದು ವ್ಯರ್ಥವಾಯಿತೇನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ.</verse>
				<verse number="12">ಪ್ರಿಯರೇ, ನಾನು ನಿಮ್ಮ ಹಾಗೆ ಆದ್ದರಿಂದ ನೀವು ನನ್ನ ಹಾಗೆ ಆಗಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನೀವು ನನಗೆ ಯಾವ ಕೇಡನ್ನೂ ಮಾಡಲಿಲ್ಲ.</verse>
				<verse number="13">ನಾನು ಮುಂಚೆ ನಿಮಗೆ ಸುವಾರ್ತೆ ಸಾರಿದ್ದು, ನನ್ನ ಶರೀರದ ಬಲಹೀನತೆಯಿಂದ ಎಂದು ನೀವು ಬಲ್ಲಿರಿ.</verse>
				<verse number="14">ನನ್ನ ದೇಹಸ್ಥಿತಿ ನಿಮಗೆ ಬೇಸರಗೊಳಿಸುವುದಾಗಿದ್ದರೂ ನೀವು ನನ್ನನ್ನು ಹೀನೈಸಲಿಲ್ಲ, ತಿರಸ್ಕರಿಸಲಿಲ್ಲ. ಆದರೆ ನನ್ನನ್ನು ದೇವದೂತನಂತೆಯೂ ಕ್ರಿಸ್ತ ಯೇಸುವಿನಂತೆಯೂ ಸೇರಿಸಿಕೊಂಡಿರಿ.</verse>
				<verse number="15">ನೀವು ಕೋರಿದ ಆ ಶುಭವೆಲ್ಲಿ? ಸಾಧ್ಯವಾಗಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಡುತ್ತಿದ್ದಿರಿ ಎಂದು ನಿಮ್ಮ ವಿಷಯವಾಗಿ ನಾನು ಸಾಕ್ಷಿಕೊಡುತ್ತೇನೆ.</verse>
				<verse number="16">ಹೀಗಿರಲಾಗಿ ಸತ್ಯವನ್ನು ಹೇಳಿದ್ದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೋ?</verse>
				<verse number="17">ಅವರು ನಿಮ್ಮನ್ನು ಆಕರ್ಷಿಸಲು ಆಸಕ್ತರಾಗಿದ್ದಾರೆ. ಆದರೆ ಒಳ್ಳೆಯ ಅಭಿಪ್ರಾಯದಿಂದ ಅಲ್ಲ. ನೀವು ಅವರ ವಿಷಯದಲ್ಲಿ ಆಸಕ್ತರಾಗಬೇಕೆಂದು ಅವರು ನಿಮ್ಮನ್ನು ನಮ್ಮಿಂದ ಪ್ರತ್ಯೇಕಿಸುವುದಕ್ಕೆ ಅಪೇಕ್ಷಿಸುತ್ತಾರೆ.</verse>
				<verse number="18">ನಾನು ನಿಮ್ಮ ಸಂಗಡ ಇರುವಾಗ ಮಾತ್ರವಲ್ಲದೆ ಯಾವಾಗಲೂ ಉತ್ತಮ ಕಾರ್ಯಗಳಲ್ಲಿ ನೀವು ಆಸಕ್ತರಾಗಿರುವುದು ಒಳ್ಳೆಯದು.</verse>
				<verse number="19">ನನ್ನ ಮಕ್ಕಳೇ, ಕ್ರಿಸ್ತ ಯೇಸುವು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಾನು ನಿಮಗಾಗಿ ಪುನಃ ಪ್ರಸವವೇದನೆ ಪಡುತ್ತೇನೆ.</verse>
				<verse number="20">ನಾನು ಈಗ ನಿಮ್ಮ ಜೊತೆಯಲ್ಲಿದ್ದು ನನ್ನ ಸ್ವರವನ್ನು ಬದಲಾಯಿಸಬೇಕೆಂದು ಅಪೇಕ್ಷಿಸುತ್ತೇನೆ, ಏಕೆಂದರೆ, ನಾನು ನಿಮ್ಮ ವಿಷಯದಲ್ಲಿ ಚಿಂತಿಸುವವನಾಗಿದ್ದೇನೆ.</verse>
				<verse number="21">ಮೋಶೆಯ ನಿಯಮದ ಕೆಳಗಿರಲು ಬಯಸುವವರೇ, ನಿಯಮವು ಏನು ಹೇಳುತ್ತದೆಯೆಂದು ನೀವು ಸ್ಪಷ್ಟವಾಗಿ ಅರ್ಥಮಾಡಿಕೊಂಡಿದ್ದೀರಾ? ನನಗೆ ಹೇಳಿರಿ.</verse>
				<verse number="22">ಏಕೆಂದರೆ ದಾಸಿಯಿಂದ ಒಬ್ಬನು, ಧರ್ಮಪತ್ನಿಯಿಂದ ಒಬ್ಬನು ಹೀಗೆ ಅಬ್ರಹಾಮನಿಗೆ ಇಬ್ಬರು ಪುತ್ರರಿದ್ದರೆಂದು ಪವಿತ್ರ ವೇದದಲ್ಲಿ ಬರೆದಿದೆ.</verse>
				<verse number="23">ದಾಸಿಯ ಮಗನು ಶಾರೀರಿಕವಾಗಿ ಹುಟ್ಟಿದವನು. ಆದರೆ ಧರ್ಮಪತ್ನಿಯ ಮಗನಾದರೋ ದೇವರ ವಾಗ್ದಾನದ ಮೂಲಕ ಹುಟ್ಟಿದನು.</verse>
				<verse number="24">ಈ ಸಂಗತಿಗಳು ಉಪಮಾನವಾಗಿವೆ. ಹೇಗೆಂದರೆ, ಇವರು ಎರಡು ಒಡಂಬಡಿಕೆಗಳೇ. ಒಂದು ಒಡಂಬಡಿಕೆ ಸೀನಾಯಿ ಪರ್ವತದಿಂದ ಉಂಟಾಗಿ ದಾಸತ್ವದಲ್ಲಿರಬೇಕಾದ ಮಕ್ಕಳನ್ನು ಹೆರುವಂಥದು. ಅದೇ ಹಾಗರ್.</verse>
				<verse number="25">ಹಾಗರ್ ಅರೇಬಿಯಾದಲ್ಲಿರುವ ಸೀನಾಯಿ ಪರ್ವತ. ಅದು ಈಗಿನ ಯೆರೂಸಲೇಮಿಗೆ ಸರಿಹೊಂದುತ್ತಾಳೆ. ಏಕೆಂದರೆ ಆಕೆಯು ಈಗಲೂ ತನ್ನ ಮಕ್ಕಳ ಸಹಿತ ದಾಸ್ಯದಲ್ಲಿದ್ದಾಳೆ.</verse>
				<verse number="26">ಆದರೆ ಸ್ವರ್ಗೀಯ ಯೆರೂಸಲೇಮ್ ಸ್ವತಂತ್ರಳು. ಈಕೆಯೇ ನಮ್ಮ ತಾಯಿ.</verse>
				<verse number="27">ಏಕೆಂದರೆ, “ಬಂಜೆಯೇ, ಹೆರದವಳೇ, ಆನಂದಿಸು. ಪ್ರಸವವೇದನೆ ಪಡದವಳೇ, ಸ್ವರವೆತ್ತಿ ಹರ್ಷದಿಂದ ಸ್ವರವೆತ್ತಿ ಕೂಗು; ಗಂಡನುಳ್ಳವಳಿಗಿಂತ ಗಂಡ ಬಿಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆ,” ಎಂದು ಪವಿತ್ರ ವೇದದಲ್ಲಿ ಬರೆದಿದೆ.</verse>
				<verse number="28">ಪ್ರಿಯರೇ, ನಾವು ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ.</verse>
				<verse number="29">ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದಂತೆಯೇ, ಈಗಲೂ ನಡೆಯುತ್ತದೆ.</verse>
				<verse number="30">ಆದರೆ ಪವಿತ್ರ ವೇದವು ಏನು ಹೇಳುತ್ತದೆ? “ದಾಸಿಯನ್ನೂ, ಅವಳ ಮಗನನ್ನೂ ಹೊರಗೆ ಹಾಕು. ಏಕೆಂದರೆ ದಾಸಿಯ ಮಗನು ಧರ್ಮಪತ್ನಿಯ ಮಗನೊಂದಿಗೆ ಎಂದಿಗೂ ವಾರಸುದಾರನಾಗಬಾರದು.” ಎಂದಲ್ಲವೇ?</verse>
				<verse number="31">ಹೀಗಿರುವಲ್ಲಿ ಪ್ರಿಯರೇ, ನಾವು ದಾಸಿಯ ಮಕ್ಕಳಲ್ಲ, ಧರ್ಮಪತ್ನಿಯ ಮಕ್ಕಳೇ ಆಗಿದ್ದೇವೆ.</verse>
			</chapter>
			<chapter number="5">
				<verse number="1">ಕ್ರಿಸ್ತ ಯೇಸು ನಮ್ಮನ್ನು ಸ್ವತಂತ್ರಕ್ಕಾಗಿಯೇ ಬಿಡುಗಡೆ ಮಾಡಿದ್ದಾರೆ. ಆದ್ದರಿಂದ ಸ್ಥಿರವಾಗಿ ನಿಲ್ಲಿರಿ. ನೀವು ನಿಯಮದ ದಾಸತ್ವದ ನೊಗದಲ್ಲಿ ಪುನಃ ಸಿಕ್ಕಿಕೊಳ್ಳಬೇಡಿರಿ.</verse>
				<verse number="2">ಇಗೋ, ಪೌಲನೆಂಬ ನಾನು ನಿಮಗೆ ಹೇಳುವುದೇನೆಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ, ಕ್ರಿಸ್ತ ಯೇಸುವಿನ ಮುಖಾಂತರ ನಿಮಗೆ ಏನೂ ಪ್ರಯೋಜನವಾಗುವುದಿಲ್ಲ.</verse>
				<verse number="3">ಸುನ್ನತಿ ಮಾಡಿಸಿಕೊಳ್ಳಲು ಬಯಸುವ ಪ್ರತಿಯೊಬ್ಬನೂ ನಿಯಮವನ್ನೆಲ್ಲಾ ಕೈಗೊಳ್ಳುವ ಹಂಗಿನಲ್ಲಿದ್ದಾನೆ ಎಂದು ಪುನಃ ದೃಢವಾಗಿ ಹೇಳುತ್ತೇನೆ.</verse>
				<verse number="4">ನೀವು ನಿಯಮದ ಮೂಲಕ ನೀತಿವಂತರಾಗಬೇಕೆಂದು ಪ್ರಯತ್ನಿಸುವವರು, ಕ್ರಿಸ್ತ ಯೇಸುವಿನಿಂದ ಬೇರ್ಪಟ್ಟಿದ್ದೀರಿ. ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ.</verse>
				<verse number="5">ನಾವಾದರೋ ನಂಬಿಕೆಯಿಂದ ನೀತಿವಂತರಾಗುವ ನಮ್ಮ ನಿರೀಕ್ಷೆಯನ್ನು ದೇವರ ಆತ್ಮನ ಮೂಲಕ ಆತುರದಿಂದ ಎದುರುನೋಡುತ್ತಿದ್ದೇವೆ.</verse>
				<verse number="6">ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.</verse>
				<verse number="7">ನೀವು ಚೆನ್ನಾಗಿ ಓಡುತ್ತಿದ್ದಿರಿ. ನೀವು ಸತ್ಯಕ್ಕೆ ವಿಧೇಯರಾಗದಂತೆ ನಿಮ್ಮನ್ನು ತಡೆದವರು ಯಾರು?</verse>
				<verse number="8">ಈ ಪ್ರೇರಣೆಯು ನಿಮ್ಮನ್ನು ಕರೆದ ದೇವರಿಂದ ಬಂದದ್ದಲ್ಲ.</verse>
				<verse number="9">ಸ್ವಲ್ಪ ಹುಳಿಯು ಹಿಟ್ಟನ್ನೆಲ್ಲಾ ಹುಳಿಮಾಡುವುದು.</verse>
				<verse number="10">ನೀವು ಬೇರೆ ರೀತಿಯಿಂದ ಯೋಚಿಸುವುದಿಲ್ಲವೆಂದು ಕರ್ತ ಯೇಸುವಿನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಇದೆ. ಆದರೆ ನಿಮ್ಮನ್ನು ತೊಂದರೆ ಪಡಿಸುವವನು ಯಾವನಾದರೂ ಸರಿ, ಅವನು ದಂಡನೆಯನ್ನು ಅನುಭವಿಸುವನು.</verse>
				<verse number="11">ಆದರೆ ಪ್ರಿಯರೇ, ನಾನು ಸುನ್ನತಿಯಾಗಬೇಕೆಂದು ಇನ್ನೂ ಬೋಧಿಸುವವನಾಗಿದ್ದರೆ, ಈಗಲೂ ನನಗೆ ಹಿಂಸೆಯಾಗುತ್ತಿರುವುದು ಏಕೆ? ಹಾಗಾದರೆ ಶಿಲುಬೆಯ ಸಂದೇಶ ಸಾರುವುದರಿಂದ ಯಾವ ಆತಂಕವೂ ಉಂಟಾಗುತ್ತಿರಲಿಲ್ಲವಲ್ಲಾ?</verse>
				<verse number="12">ನಿಮ್ಮನ್ನು ಸುನ್ನತಿ ಮಾಡಿಸಿಕೊಳ್ಳಬೇಕೆಂದು ತೊಂದರೆ ಪಡಿಸುವವರಿಗೆ ಆ ಅಂಗಚ್ಛೇದವನ್ನಾದರೂ ಮಾಡಿಕೊಂಡರೆ ಲೇಸು ಎಂದು ಬಯಸುತ್ತೇನೆ!</verse>
				<verse number="13">ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ.</verse>
				<verse number="14">ಏಕೆಂದರೆ, “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು,” ಎಂಬ ಒಂದೇ ಆಜ್ಞೆಯಲ್ಲಿ ನಿಯಮವೆಲ್ಲಾ ಅಡಕವಾಗಿದೆ.</verse>
				<verse number="15">ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ.</verse>
				<verse number="16">ನಾನು ಹೇಳುವುದೇನೆಂದರೆ, ಪವಿತ್ರಾತ್ಮರ ನಡೆಸುವಿಕೆಯಿಂದ ಬಾಳಿರಿ, ಆಗ ನೀವು ದೈಹಿಕ ಆಸೆಗಳನ್ನು ಎಂದೂ ಪೂರೈಸಲಾರಿರಿ.</verse>
				<verse number="17">ಏಕೆಂದರೆ ಮಾಂಸಭಾವವು ಆತ್ಮನಿಗೆ ವಿರುದ್ಧವಾಗಿಯೂ ಆತ್ಮನು ಮಾಂಸಭಾವಕ್ಕೆ ವಿರುದ್ಧವಾಗಿಯೂ ಆಶಿಸುತ್ತದೆ. ನೀವು ಮಾಡಬಯಸುವುದನ್ನು ಮಾಡದಂತೆ ಇವು ಒಂದಕ್ಕೊಂದು ವಿರೋಧವಾಗಿವೆ.</verse>
				<verse number="18">ಆದರೆ ನೀವು ದೇವರ ಆತ್ಮದಿಂದ ನಡೆಸಿಕೊಳ್ಳುವವರಾದರೆ, ನಿಯಮದ ಅಧೀನತೆಯಲ್ಲಿ ಇರುವವರಲ್ಲ.</verse>
				<verse number="19">ಮಾಂಸಭಾವದ ಕೃತ್ಯಗಳು ಹೀಗೆ ಸ್ಪಷ್ಟವಾಗಿವೆ: ಜಾರತ್ವ, ಅಶುದ್ಧತ್ವ, ಸಡಿಲ ಜೀವನ,</verse>
				<verse number="20">ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಸ್ವಾರ್ಥತ್ವ, ವಿರೋಧತ್ವ, ಭಿನ್ನತೆ,</verse>
				<verse number="21">ಮತ್ಸರ, ಕುಡಿಕತನ, ದುಂದೌತಣ ಈ ಮೊದಲಾದವುಗಳೇ. ಇಂಥ ಕೃತ್ಯಗಳನ್ನು ನಡೆಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.</verse>
				<verse number="22">ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ,</verse>
				<verse number="23">ಸಾತ್ವಿಕತೆ, ಸಂಯಮ ಇಂಥವುಗಳೇ. ಇವುಗಳಿಗೆ ವಿರೋಧವಾಗಿ ಯಾವ ನಿಯಮವೂ ಇಲ್ಲ.</verse>
				<verse number="24">ಕ್ರಿಸ್ತ ಯೇಸುವಿನವರು ತಮ್ಮ ಮಾಂಸಭಾವವನ್ನೂ ಅದರ ಆಶೆ ಹಾಗೂ ಅಪೇಕ್ಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ.</verse>
				<verse number="25">ನಾವು ದೇವರ ಆತ್ಮದಿಂದ ಜೀವಿಸುತ್ತಿರಲಾಗಿ ಆತ್ಮರನ್ನನುಸರಿಸಿ ನಡೆಯೋಣ.</verse>
				<verse number="26">ನಾವು ಅಹಂಕಾರಿಗಳಾಗಿರಬಾರದು. ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಮತ್ಸರಗೊಳ್ಳದೆಯೂ ಇರೋಣ.</verse>
			</chapter>
			<chapter number="6">
				<verse number="1">ಪ್ರಿಯರೇ, ಒಬ್ಬ ಮನುಷ್ಯನು ಯಾವುದಾದರೊಂದು ಪಾಪದಲ್ಲಿ ಸಿಕ್ಕಿಬಿದ್ದರೆ ಅಂಥವನನ್ನು ಆತ್ಮಿಕರಾದ ನೀವು ಸಾತ್ವಿಕ ಆತ್ಮದಿಂದ ಪುನಃ ಸ್ಥಾಪಿಸಿರಿ. ಆದರೆ ನೀನು ಶೋಧನೆಗೆ ಒಳಗಾಗದಂತೆ ನಿನ್ನ ವಿಷಯದಲ್ಲಿ ಎಚ್ಚರಿಕೆಯಾಗಿರು.</verse>
				<verse number="2">ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ. ಹೀಗೆ ಕ್ರಿಸ್ತ ಯೇಸುವಿನ ನಿಯಮವನ್ನು ನೆರವೇರಿಸಿರಿ.</verse>
				<verse number="3">ಏನೂ ಅಲ್ಲದವನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿಕೊಂಡರೆ, ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ.</verse>
				<verse number="4">ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ, ಆಗ ಅವನು ತನ್ನಲ್ಲಿ ಮಾತ್ರ ಸಂತೋಷಪಡುವುದಕ್ಕೆ ಆಸ್ಪದವಾಗುವುದೇ ಹೊರತು ಮತ್ತೊಬ್ಬನಲ್ಲಿ ಅಲ್ಲ.</verse>
				<verse number="5">ಏಕೆಂದರೆ ಪ್ರತಿಯೊಬ್ಬನೂ ತನ್ನ ಸ್ವಂತ ಹೊರೆಯನ್ನು ಹೊತ್ತುಕೊಳ್ಳಬೇಕು.</verse>
				<verse number="6">ವಾಕ್ಯದಲ್ಲಿ ಉಪದೇಶ ಹೊಂದುವವನು, ಉಪದೇಶ ಮಾಡುವವನೊಂದಿಗೆ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.</verse>
				<verse number="7">ಮೋಸಹೋಗಬೇಡಿರಿ, ದೇವರು ಪರಿಹಾಸ್ಯಕ್ಕೆ ಒಳಗಾಗುವವರಲ್ಲ. ಏಕೆಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.</verse>
				<verse number="8">ಮಾಂಸಭಾವಕ್ಕೆ ಬಿತ್ತುವವನು, ಮಾಂಸಭಾವದಿಂದ ನಾಶವನ್ನು ಕೊಯ್ಯುವನು. ಆದರೆ ದೇವರ ಆತ್ಮರನ್ನು ಮೆಚ್ಚಿಸಲು ಬಿತ್ತುವವನು, ಆತ್ಮದಿಂದ ನಿತ್ಯಜೀವವನ್ನು ಕೊಯ್ಯುವನು.</verse>
				<verse number="9">ಒಳ್ಳೆಯದನ್ನು ಮಾಡುವುದರಲ್ಲಿ ಎದೆಗುಂದದಿರೋಣ. ಏಕೆಂದರೆ ನಾವು ಬೇಸರಗೊಳ್ಳದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.</verse>
				<verse number="10">ಆದ್ದರಿಂದ ನಮಗೆ ಸಮಯವಿರಲಾಗಿ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ. ಮುಖ್ಯವಾಗಿ ವಿಶ್ವಾಸಿಗಳ ಕುಟುಂಬದವರಿಗೆ ಮಾಡೋಣ.</verse>
				<verse number="11">ನನ್ನ ಕೈಯಿಂದ ಎಷ್ಟು ದೊಡ್ಡ ಅಕ್ಷರಗಳಲ್ಲಿ ನಾನು ನಿಮಗೆ ಬರೆದಿದ್ದೇನೆ ನೋಡಿರಿ.</verse>
				<verse number="12">ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡುವವರೂ ತಮಗೆ ಕ್ರಿಸ್ತ ಯೇಸುವಿನ ಶಿಲುಬೆಯ ನಿಮಿತ್ತ ಹಿಂಸೆಯಾಗಬಾರದೆಂಬುದಕ್ಕಾಗಿಯೇ ಸುನ್ನತಿ ಮಾಡಿಸಿಕೊಳ್ಳಬೇಕೆಂದು ನಿಮ್ಮನ್ನು ಒತ್ತಾಯ ಮಾಡುತ್ತಾರೆ.</verse>
				<verse number="13">ಸುನ್ನತಿ ಮಾಡಿಸಿಕೊಳ್ಳುವ ತಾವಾದರೋ ನಿಯಮವನ್ನು ಕೈಗೊಂಡು ನಡೆಯುವುದಿಲ್ಲ. ಆದರೆ ಅವರು ನಿಮ್ಮ ಶರೀರದ ಸುನ್ನತಿಯಿಂದ ಹೆಚ್ಚಳಪಡುವಂತೆ ನಿಮಗೆ ಸುನ್ನತಿಯಾಗಬೇಕೆಂದು ಅಪೇಕ್ಷಿಸುತ್ತಾರೆ.</verse>
				<verse number="14">ನನಗಾದರೋ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಹೆಚ್ಚಳ ಪಡುವುದು ಬೇಡವೇ ಬೇಡ. ಅವರ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.</verse>
				<verse number="15">ಸುನ್ನತಿಯಾಗುವುದರಿಂದ ಇಲ್ಲವೆ, ಸುನ್ನತಿಯಾಗದೆ ಇರುವುದರಿಂದ ಏನೂ ಪ್ರಯೋಜನವಿಲ್ಲ. ಆದರೆ ಹೊಸ ಸೃಷ್ಟಿಯೇ ಬೇಕು.</verse>
				<verse number="16">ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆಯೂ ದೇವರ ಇಸ್ರಾಯೇಲಿನ ಸಮಾಧಾನ ಹಾಗೂ ಕರುಣೆ ಇರಲಿ.</verse>
				<verse number="17">ಇನ್ನು ಮೇಲೆ ಯಾರೂ ನನಗೆ ತೊಂದರೆ ಕೊಡಬಾರದು. ನಾನು ನನ್ನ ದೇಹದಲ್ಲಿ ಕರ್ತ ಆಗಿರುವ ಯೇಸುವಿನ ಗುರುತುಗಳನ್ನು ಪಡೆದಿದ್ದೇನೆ.</verse>
				<verse number="18">ಪ್ರಿಯರೇ, ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ. ಆಮೆನ್.</verse>
			</chapter>
		</book>
		<book number="49">
			<chapter number="1">
				<verse number="1">ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು, ಎಫೆಸದಲ್ಲಿರುವ ಭಕ್ತರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ ಬರೆಯುತ್ತಿರುವುದು:</verse>
				<verse number="2">ನಮ್ಮ ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.</verse>
				<verse number="3">ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ದೇವರೂ ತಂದೆಯೂ ಆಗಿರುವವರಿಗೆ ಸ್ತೋತ್ರ, ದೇವರು ಕ್ರಿಸ್ತನಲ್ಲಿ ಪರಲೋಕದ ಎಲ್ಲಾ ಆತ್ಮಿಕ ಆಶೀರ್ವಾದಗಳಿಂದ ನಮ್ಮನ್ನು ಆಶೀರ್ವದಿಸಿದ್ದಾರೆ.</verse>
				<verse number="4">ನಾವು ಪ್ರೀತಿಯಲ್ಲಿದ್ದು ಅವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಅವರು ಲೋಕದ ಅಸ್ತಿವಾರಕ್ಕೆ ಮುಂಚೆ ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡರು.</verse>
				<verse number="5">ದೇವರು ತಮ್ಮ ಚಿತ್ತದ ಸಂತೋಷಕ್ಕನುಸಾರವಾಗಿ ಕ್ರಿಸ್ತ ಯೇಸುವಿನ ಮೂಲಕ ನಮ್ಮನ್ನು ತಮಗೋಸ್ಕರ ತಮ್ಮ ಪುತ್ರರಾಗಿ ಸ್ವೀಕಾರ ಮಾಡುವಂತೆ ಮೊದಲೇ ನೇಮಿಸಿದರು.</verse>
				<verse number="6">ತಮ್ಮ ಕೃಪಾ ಮಹಿಮೆಯ ಸ್ತುತಿಗಾಗಿಯೇ ಇವುಗಳನ್ನು ದೇವರು ತಾವು ಪ್ರೀತಿಸುವ ಕ್ರಿಸ್ತನಲ್ಲಿ ನಮಗೆ ಉಚಿತವಾಗಿ ದಯಪಾಲಿಸಿದ್ದಾರೆ.</verse>
				<verse number="7">ದೇವರ ಕೃಪಾ ಐಶ್ವರ್ಯಕ್ಕೆ ಅನುಸಾರವಾಗಿ ಕ್ರಿಸ್ತನಲ್ಲಿ ನಮಗೆ ಅವರ ರಕ್ತದ ಮೂಲಕ ಪಾಪಗಳ ಕ್ಷಮಾಪಣೆಯಾಗಿ ವಿಮೋಚನೆಯಾಯಿತು.</verse>
				<verse number="8">ದೇವರು ಆ ಕೃಪೆಯನ್ನು ನಮ್ಮಲ್ಲಿ ಸಮೃದ್ಧಿಯಾಗಿ ಸುರಿಸಿದ್ದಾರೆ. ಎಲ್ಲಾ ಜ್ಞಾನ ವಿವೇಕಗಳೊಂದಿಗೆ</verse>
				<verse number="9">ದೇವರು ಕ್ರಿಸ್ತನಲ್ಲಿ ಉದ್ದೇಶಮಾಡಿಕೊಂಡ ತಮ್ಮ ಚಿತ್ತದ ರಹಸ್ಯವನ್ನು ಸಂತೋಷದಿಂದ ನಮಗೆ ಪ್ರಕಟಿಸಿದರು,</verse>
				<verse number="10">ಆ ರಹಸ್ಯವೋ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕಾಲವು ಪರಿಪೂರ್ಣಗೊಂಡಾಗ ಕ್ರಿಸ್ತನಲ್ಲಿ ಒಂದುಗೂಡಿಸುವುದಾಗಿದೆ.</verse>
				<verse number="11">ದೇವರ ಚಿತ್ತಾನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವ ಅವರ ಉದ್ದೇಶದ ಪ್ರಕಾರ ಕ್ರಿಸ್ತನಲ್ಲಿ ನಮ್ಮನ್ನು ಮೊದಲೇ ಆರಿಸಿಕೊಂಡರು.</verse>
				<verse number="12">ಇದರಿಂದ ಕ್ರಿಸ್ತನಲ್ಲಿ ಮೊದಲು ನಿರೀಕ್ಷೆಯುಳ್ಳವರಾದ ನಾವು ಅವರ ಮಹಿಮೆಯ ಸ್ತುತಿಯಾಗಿರುವಂತೆ ನೇಮಿಸಿದರು.</verse>
				<verse number="13">ನೀವು ಸಹ ನಿಮ್ಮ ರಕ್ಷಣೆಯ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿದ ಮೇಲೆ ಕ್ರಿಸ್ತನಲ್ಲಿ ನಂಬಿಕೆಯಿಟ್ಟು ವಾಗ್ದಾನದ ಪವಿತ್ರಾತ್ಮರಿಂದ ಮುದ್ರೆಹೊಂದಿದ್ದೀರಿ.</verse>
				<verse number="14">ದೇವರಿಗೆ ಸೇರಿದವರಾದ ನಾವು ವಿಮೋಚನೆಯಾಗುವ ತನಕ ನಮ್ಮ ಸ್ವರ್ಗೀಯ ವಾರಸುತನವನ್ನು ಹೊಂದುವೆವು ಎಂಬುವುದಕ್ಕೆ ಈ ಪವಿತ್ರಾತ್ಮ ದೇವರೇ ನಮಗೆ ಹೊಣೆಯಾಗಿದ್ದಾರೆ. ದೇವರ ಮಹಿಮೆಯ ನಿಮಿತ್ಯವಾಗಿ ನಾವು ಅವರನ್ನು ಸ್ತುತಿಸೋಣ.</verse>
				<verse number="15">ಈ ಕಾರಣದಿಂದ ನಾನು ಸಹ ಕರ್ತ ಯೇಸುವಿನಲ್ಲಿರುವ ನಿಮ್ಮ ನಂಬಿಕೆ ಹಾಗೂ ಪರಿಶುದ್ಧರೆಲ್ಲರಿಗಾಗಿರುವ ಪ್ರೀತಿಯನ್ನು ಕುರಿತು ಕೇಳಿ,</verse>
				<verse number="16">ನನ್ನ ಪ್ರಾರ್ಥನೆಗಳಲ್ಲಿ ನಿಮಗಾಗಿ ವಿಜ್ಞಾಪಿಸಿ, ನಿಮ್ಮ ನಿಮಿತ್ತವಾಗಿ ಎಡಬಿಡದೆ ಸ್ತೋತ್ರ ಮಾಡುತ್ತೇನೆ.</verse>
				<verse number="17">ನಮ್ಮ ಕರ್ತ ಯೇಸುಕ್ರಿಸ್ತರ ದೇವರೂ ಮಹಿಮೆಯ ತಂದೆಯಾದವರನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳುವಂತೆ ಜ್ಞಾನದ ಮತ್ತು ಪ್ರಕಟಣೆಯ ಆತ್ಮವನ್ನು ನಿಮಗೆ ಅನುಗ್ರಹಿಸಲಿ ಎಂದು ನಿಮಗಾಗಿ ಯಾವಾಗಲೂ ಪ್ರಾರ್ಥನೆ ಮಾಡುವವನಾಗಿದ್ದೇನೆ.</verse>
				<verse number="18">ದೇವರು ನಿಮ್ಮ ಮನೋನೇತ್ರಗಳನ್ನು ಬೆಳಗಿಸಲಿ ಎಂದು ಬೇಡಿಕೊಳ್ಳುತ್ತಿದ್ದೇನೆ. ಆಗ ಮಾತ್ರವೇ ನೀವು ದೇವರ ಕರೆಯ ನಿರೀಕ್ಷೆಯನ್ನೂ, ಪರಿಶುದ್ಧರಲ್ಲಿ ಅವರಿಗಿರುವ ವಾರಸುತನದ ಮಹಿಮೆಯನ್ನೂ ನೀವು ತಿಳಿದುಕೊಳ್ಳುವಿರಿ.</verse>
				<verse number="19">ಮಾತ್ರವಲ್ಲದೆ ನಂಬುವವರಾದ ನಮಗಾಗಿರುವ ಹೋಲಿಸಲಾಗದ ದೇವರ ಮಹಾಶಕ್ತಿಯನ್ನೂ ನೀವು ತಿಳಿಯುವಂತೆ ಪ್ರಾರ್ಥನೆ ಮಾಡುವವನಾಗಿದ್ದೇನೆ.</verse>
				<verse number="20">ಈ ಮಹಾಶಕ್ತಿಯನ್ನು ದೇವರು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿ,</verse>
				<verse number="21">ಸಕಲ ರಾಜತ್ವ, ಅಧಿಕಾರ, ಶಕ್ತಿ, ಪ್ರಭುತ್ವಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿಯೂ ಸಹ, ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೋಕದಲ್ಲಿ ಕ್ರಿಸ್ತರನ್ನು ತಮ್ಮ ಬಲಗಡೆಯಲ್ಲಿ ಕೂರಿಸಿಕೊಂಡರು.</verse>
				<verse number="22">ದೇವರು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಅಧೀನಮಾಡಿ, ಅವರನ್ನು ಎಲ್ಲದರ ಮೇಲೆ ಶಿರಸ್ಸಾಗಿರಲು ಸಭೆಗೋಸ್ಕರ ನೇಮಿಸಿದ್ದಾರೆ.</verse>
				<verse number="23">ಎಲ್ಲವನ್ನು ಎಲ್ಲಾ ವಿಧದಲ್ಲಿಯೂ ತುಂಬಿಸುವ ದೇವರಿಂದ ಕ್ರಿಸ್ತನ ದೇಹವಾಗಿರುವ ಸಭೆಯು ಪರಿಪೂರ್ಣ ಉಳ್ಳದ್ದಾಗಿದೆ.</verse>
			</chapter>
			<chapter number="2">
				<verse number="1">ನೀವು ನಿಮ್ಮ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಹಿಂದೊಮ್ಮೆ ಸತ್ತವರಾಗಿದ್ದೀರಿ.</verse>
				<verse number="2">ನೀವು, ಹಿಂದೆ ಇಹಲೋಕದ ಮಾರ್ಗಕ್ಕೆ ಅನುಸಾರವಾಗಿ ನಡೆದುಕೊಂಡು, ವಾಯುಮಂಡಲದ ಅಧಿಪತಿಯ ಆತ್ಮನಿಗನುಸಾರವಾಗಿದ್ದೀರಿ. ಆ ದುರಾತ್ಮವು ಈಗ ಅವಿಧೇಯತೆಯ ಮಕ್ಕಳಲ್ಲಿ ಕಾರ್ಯಮಾಡುತ್ತಿದೆ.</verse>
				<verse number="3">ಹಿಂದೊಮ್ಮೆ ನಾವೆಲ್ಲರೂ ಅವರೊಂದಿಗೆ ನಮ್ಮ ದೇಹದ ಆಶೆಗಳ ಪ್ರಕಾರ ಜೀವಿಸುತ್ತಿದ್ದಾಗ ಮನಸ್ಸಿನ ಹಾಗೂ ಶರೀರದ ಆಶೆಗಳನ್ನು ನೆರವೇರಿಸುತ್ತಾ ನಡೆದು, ಉಳಿದವರಂತೆ ಸ್ವಾಭಾವಿಕವಾಗಿ ದೇವರ ಕೋಪಕ್ಕೆ ಗುರಿಯಾದವರಾಗಿದ್ದೆವು.</verse>
				<verse number="4">ಆದರೆ ಕರುಣೆಯಲ್ಲಿ ಐಶ್ವರ್ಯವಂತರಾದ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿದರು.</verse>
				<verse number="5">ಹೇಗೆದಂರೆ, ಅಪರಾಧಗಳಲ್ಲಿ ಸತ್ತವರಾಗಿದ್ದರೂ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದರು. ಹೀಗೆ ನೀವು ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದ್ದೀರಿ.</verse>
				<verse number="6">ಕ್ರಿಸ್ತ ಯೇಸುವಿನೊಂದಿಗೆ ದೇವರು ನಮ್ಮನ್ನು ಎಬ್ಬಿಸಿ ಪರಲೋಕದ ಉನ್ನತ ಸ್ಥಳಗಳಲ್ಲಿ ಕ್ರಿಸ್ತನೊಂದಿಗೇ ನಮ್ಮನ್ನು ಕೂತುಕೊಳ್ಳುವಂತೆ ಮಾಡಿದ್ದಾರೆ.</verse>
				<verse number="7">ಮುಂದಣ ಯುಗಗಳಲ್ಲಿ ಕ್ರಿಸ್ತ ಯೇಸುವಿನ ದಯೆಯ ಮೂಲಕ ದೇವರು ತಮ್ಮ ಮಿತಿಯಿಲ್ಲದ ಕೃಪೆಯನ್ನು ನಮಗೆ ತೋರಿಸಬೇಕೆಂದಿದ್ದಾರೆ.</verse>
				<verse number="8">ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದ್ದೀರಿ. ಈ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಇದು ದೇವರ ದಾನವೇ.</verse>
				<verse number="9">ಯಾರಾದರೂ ಹೆಮ್ಮೆ ಪಡುವಂತೆ ಈ ರಕ್ಷಣೆಯು ಪುಣ್ಯಕ್ರಿಯೆಗಳಿಂದ ಉಂಟಾದದ್ದೂ ಅಲ್ಲ.</verse>
				<verse number="10">ನಾವು ಕ್ರಿಸ್ತ ಯೇಸುವಿನಲ್ಲಿ ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೇ ಸೃಷ್ಟಿಸಲಾದ ದೇವರ ಕಲಾಕೃತಿಯಾಗಿದ್ದೇವೆ. ಸತ್ಕ್ರಿಯೆಗಳನ್ನು ಮಾಡುತ್ತಾ ಬಾಳಬೇಕೆಂದು ದೇವರು ನಮ್ಮನ್ನು ಮುಂಚಿತವಾಗಿ ನೇಮಿಸಿದ್ದಾರೆ.</verse>
				<verse number="11">ಆದಕಾರಣ ಸುನ್ನತಿಮಾಡಿಸಿಕೊಂಡಿದ್ದೇವೆ ಎಂದು ತಮ್ಮ ಬಗ್ಗೆ ಹೇಳಿಕೊಂಡವರು, ಹುಟ್ಟಿದಂದಿನಿಂದ ಯೆಹೂದ್ಯರಲ್ಲದವರಾದ ನಿಮಗೆ ಸುನ್ನತಿಮಾಡಿಸಿಕೊಳ್ಳದವರು ಎಂದು ಹೇಳಿದ್ದನು ನೆನಪುಮಾಡಿಕೊಳ್ಳಿ. ಈ ಸುನ್ನತಿಯು ಮನುಷ್ಯರಿಂದಾದದ್ದಷ್ಟೇ.</verse>
				<verse number="12">ಇದಲ್ಲದೆ ನೀವು ಆಗ ಕ್ರಿಸ್ತನಿಲ್ಲದವರೂ ಇಸ್ರಾಯೇಲಿನ ಪೌರತ್ವದಿಂದ ಪ್ರತ್ಯೇಕಿಸಲಾದವರೂ ಒಡಂಬಡಿಕೆಯ ವಾಗ್ದಾನಕ್ಕೆ ವಿದೇಶಿಯವರೂ ಲೋಕದಲ್ಲಿ ದೇವರೊಂದಿಗೆ ಯಾವ ಸಂಬಂಧವಿಲ್ಲದೆ ನಿರೀಕ್ಷೆಯಿಲ್ಲದವರೂ ಆಗಿದ್ದೀರೆಂದು ಜ್ಞಾಪಕಮಾಡಿಕೊಳ್ಳಿರಿ.</verse>
				<verse number="13">ಮೊದಲು ಕ್ರಿಸ್ತ ಯೇಸುವಿಗೆ ದೂರವಾಗಿದ್ದ ನೀವು ಈಗ ಕ್ರಿಸ್ತನ ರಕ್ತದ ಮೂಲಕ ಹತ್ತಿರವಾಗಿದ್ದೀರಿ.</verse>
				<verse number="14">ಕ್ರಿಸ್ತ ಯೇಸು ತಾವೇ ನಮ್ಮ ಸಮಾಧಾನವಾಗಿದ್ದು, ಎರಡು ಗುಂಪಿನವರನ್ನು ಒಂದು ಮಾಡಿ, ಅಗಲಿಸಿದ ವೈರತ್ವದ ಅಡ್ಡಗೋಡೆಯನ್ನು ತಮ್ಮ ಶರೀರದ ಮೂಲಕ ಕೆಡವಿಹಾಕಿದರು.</verse>
				<verse number="15">ಹೀಗೆ ಕ್ರಿಸ್ತ ಯೇಸು ತಮ್ಮ ದೇಹವನ್ನು ಶಿಲುಬೆಯಲ್ಲಿ ಸಮರ್ಪಿಸಿದ್ದರಿಂದ ನಿಯಮದ ಆಜ್ಞೆಗಳುಳ್ಳ ಶಾಸನಗಳನ್ನು ರದ್ದುಗೊಳಿಸಿದರು. ಈ ರೀತಿಯಾಗಿ ಇವೆರಡೂ ಗುಂಪಿನವರಿಂದ ಒಬ್ಬ ನೂತನ ಮಾನವತ್ವವನ್ನು ತಮ್ಮಲ್ಲಿ ಸೃಷ್ಟಿಸಿ ಸಮಾಧಾನವನ್ನು ಉಂಟುಮಾಡಿದರು.</verse>
				<verse number="16">ಶಿಲುಬೆಯ ಮರಣದ ಮೂಲಕ ಇವೆರಡೂ ಗುಂಪಿನವರಿಂದ ಒಂದೇ ದೇಹದವರನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿ, ಇದ್ದ ವೈರತ್ವವನ್ನು ಇಲ್ಲದಂತೆ ಮಾಡಿದರು.</verse>
				<verse number="17">ಇದಲ್ಲದೆ ಕ್ರಿಸ್ತ ಯೇಸುವು ಬಂದು ದೂರವಾಗಿದ್ದ ನಿಮಗೂ ಸಮೀಪವಾಗಿದ್ದ ನಮಗೂ ಸಮಾಧಾನವನ್ನು ಸಾರಿದರು.</verse>
				<verse number="18">ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ನಾವೂ ನೀವೂ ಪವಿತ್ರಾತ್ಮ ದೇವರಿಂದ ತಂದೆಯ ಬಳಿಗೆ ಪ್ರವೇಶಿಸುವುದಕ್ಕೆ ಮಾರ್ಗವಾಯಿತು.</verse>
				<verse number="19">ಹೀಗಿರಲಾಗಿ, ನೀವು ಇನ್ನು ಮೇಲೆ ಪರಕೀಯರೂ ಪರದೇಶದವರೂ ಆಗಿರದೆ ದೇವಜನರೊಂದಿಗೆ ಜೊತೆ ನಾಗರಿಕರೂ ದೇವರ ಮನೆಯವರೂ ಆಗಿದ್ದೀರಿ.</verse>
				<verse number="20">ಕ್ರಿಸ್ತ ಯೇಸು ಎಂಬ ಮುಖ್ಯ ಮೂಲೆಗಲ್ಲಿನೊಂದಿಗೆ ಅಪೊಸ್ತಲರು ಹಾಗೂ ಪ್ರವಾದಿಗಳೆಂಬ ಅಸ್ತಿವಾರದ ಮೇಲೆ ನೀವು ಕಟ್ಟಲಾಗಿದ್ದೀರಿ.</verse>
				<verse number="21">ಕ್ರಿಸ್ತನಲ್ಲಿ ಕಟ್ಟಡವೆಲ್ಲವೂ ಒಂದಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ.</verse>
				<verse number="22">ನೀವೂ ಸಹ ಆತ್ಮನ ಮೂಲಕ ಕ್ರಿಸ್ತನಲ್ಲಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ನಿರ್ಮಿತರಾಗುತ್ತಿದ್ದೀರಿ.</verse>
			</chapter>
			<chapter number="3">
				<verse number="1">ಈ ಕಾರಣದಿಂದ ಯೆಹೂದ್ಯರಲ್ಲದವರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:</verse>
				<verse number="2">ನಿಮಗೋಸ್ಕರವಾಗಿ ನನಗೆ ಕೊಡಲಾದ ದೇವರ ಕೃಪೆಯ ಕಾರ್ಯಭಾರವನ್ನು ನೀವು ಕೇಳಿದ್ದೀರಿ,</verse>
				<verse number="3">ಅವರು ರಹಸ್ಯವನ್ನು ಪ್ರಕಟನೆಯಿಂದ ನನಗೆ ತಿಳಿಸಿದರೆಂದು ನಾನು ನಿಮಗೆ ಮೊದಲೇ ಸಂಕ್ಷೇಪವಾಗಿ ಬರೆದಿದ್ದೇನೆ.</verse>
				<verse number="4">ಅದನ್ನು ನೀವು ಓದಿದರೆ ಕ್ರಿಸ್ತನ ರಹಸ್ಯದ ಕುರಿತಾಗಿ ನನಗಿರುವ ಒಳನೋಟವನ್ನು ನೀವೇ ಅರ್ಥಮಾಡಿಕೊಳ್ಳುವಿರಿ.</verse>
				<verse number="5">ಈ ರಹಸ್ಯವು ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ದೇವರಾತ್ಮರ ಮೂಲಕ ಈಗ ಪ್ರಕಟಿಸಿದಂತೆ, ಬೇರೆ ತಲೆಮಾರುಗಳಲ್ಲಿದ್ದ ಜನರಿಗೆ ತಿಳಿಸಿರಲಿಲ್ಲ.</verse>
				<verse number="6">ಸುವಾರ್ತೆಯ ಮೂಲಕ ಯೆಹೂದ್ಯರಲ್ಲದವರೂ ಸಹ ಇಸ್ರಾಯೇಲರೊಂದಿಗೆ ವಾರಸುದಾರರೂ ಒಂದೇ ದೇಹದ ಅವಯವಗಳೂ ಕ್ರಿಸ್ತ ಯೇಸುವಿನಲ್ಲಿ ದೇವರ ವಾಗ್ದಾನದ ಸಹಪಾಲುಗಾರರೂ ಆಗಿರಬೇಕೆಂಬುದೇ ಈ ರಹಸ್ಯ.</verse>
				<verse number="7">ದೇವರ ಶಕ್ತಿಯ ಕ್ರಿಯೆಯಿಂದ ನನಗೆ ಕೊಡಲಾದ ಅವರ ದೇವ ಕೃಪಾದಾನಕ್ಕೆ ಅನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.</verse>
				<verse number="8">ನಾನು ಕರ್ತನ ಜನರೆಲ್ಲರಲ್ಲಿಯೂ ಅತ್ಯಲ್ಪನಾಗಿದ್ದೇನೆ. ಹಾಗಿದ್ದರೂ, ನನಗೆ ಈ ಕೃಪೆ ಕೊಡಲಾಯಿತು: ಏಕೆಂದರೆ, ನಾನು ಕ್ರಿಸ್ತನ ಅಪರಿಮಿತವಾದ ಐಶ್ವರ್ಯವನ್ನು ಯೆಹೂದ್ಯರಲ್ಲದವರಿಗೆ ಸಾರುವಂತೆಯೂ</verse>
				<verse number="9">ಸಮಸ್ತವನ್ನೂ ಸೃಷ್ಟಿಸಿದ ದೇವರಲ್ಲಿ ಲೋಕಾದಿಯಿಂದ ಮರೆಯಾಗಿದ್ದ ಕಾರ್ಯಭಾರದ ರಹಸ್ಯವು ಏನೆಂಬುದನ್ನು ಎಲ್ಲರಿಗೂ ಸ್ಪಷ್ಟಪಡಿಸುವುದಕ್ಕಾಗಿಯೂ ಆಗಿರುತ್ತದೆ.</verse>
				<verse number="10">ಬಹು ಪ್ರಕಾರದ ದೇವರ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶ.</verse>
				<verse number="11">ಹೀಗೆ ದೇವರು ತಮ್ಮ ನಿತ್ಯ ಉದ್ದೇಶದ ಪ್ರಕಾರ ಇದನ್ನು ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ನೆರವೇರಿಸಿದರು.</verse>
				<verse number="12">ಕ್ರಿಸ್ತನಲ್ಲಿಯೂ ಕ್ರಿಸ್ತನ ಮೇಲೆ ನಂಬಿಕೆಯನ್ನಿಡುವುದರ ಮೂಲಕವೂ ನಾವು ಸ್ವಾತಂತ್ರ್ಯದಿಂದಲೂ ಭರವಸೆಯಿಂದಲೂ ದೇವರನ್ನು ಸಮೀಪಿಸಲು ಈಗ ಸಾಧ್ಯ.</verse>
				<verse number="13">ಆದ್ದರಿಂದ, ನಿಮಗಾಗಿ ನನಗುಂಟಾದ ಸಂಕಟಗಳು ನಿಮಗೆ ಮಹಿಮೆಯಾಗಿರುವುದರಿಂದ, ನೀವು ಧೈರ್ಯಗೆಡಬಾರದೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ.</verse>
				<verse number="14">ಈ ಕಾರಣದಿಂದ, ಪರಲೋಕ ಭೂಲೋಕದಲ್ಲಿರುವ ಪ್ರತಿ ಕುಟುಂಬವೂ ಹೆಸರು ಪಡೆದಿರಲು ಕಾರಣವಾಗಿರುವ ತಂದೆಯ ಮುಂದೆ ನಾನು ಮೊಣಕಾಲೂರುತ್ತೇನೆ:</verse>
				<verse number="15">ದೇವರು ತಮ್ಮ ಮಹಿಮೆಯ ಐಶ್ವರ್ಯಕ್ಕನುಸಾರವಾಗಿ ತಮ್ಮ ಆತ್ಮನ ಮೂಲಕ ನಿಮ್ಮನ್ನು ಆಂತರ್ಯದಲ್ಲಿ ಶಕ್ತಿಯಿಂದ ಬಲಪಡಿಸಲಿ ಎಂದು ಪ್ರಾರ್ಥಿಸುತ್ತೇನೆ.</verse>
				<verse number="16">ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಲಿ. ನೀವು ಪ್ರೀತಿಯಲ್ಲಿ ಬೇರೂರಿ ನೆಲೆಗೊಂಡು ನಿಂತು</verse>
				<verse number="17">ದೇವರ ಪರಿಶುದ್ಧರೆಲ್ಲರೊಂದಿಗೆ ಅದರ ಅಗಲ, ಉದ್ದ, ಆಳ ಮತ್ತು ಎತ್ತರವನ್ನು ಪೂರ್ಣವಾಗಿ ಕ್ರಿಸ್ತನ ಪ್ರೀತಿಯನ್ನು ಅರಿಯುವುದಕ್ಕೆ ಶಕ್ತರಾಗಲಿ.</verse>
				<verse number="18">ಮತ್ತು ತಿಳುವಳಿಕೆಗೆ ಅಪಾರವಾದ ಕ್ರಿಸ್ತನ ಪ್ರೀತಿಯನ್ನು ನೀವು ತಿಳಿದುಕೊಂಡು ದೇವರ ಸರ್ವಸಂಪೂರ್ಣತೆಯಿಂದ ತುಂಬಿದವರಾಗಲಿ ಎಂದು ಅವರನ್ನು ಬೇಡಿಕೊಳ್ಳುತ್ತೇನೆ.</verse>
				<verse number="19">ನಮ್ಮಲ್ಲಿ ಕಾರ್ಯಸಾಧಿಸುವ ತಮ್ಮ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾಗಿಯೇ ಎಲ್ಲವನ್ನೂ ಮಾಡಲು ಶಕ್ತರಾದ ದೇವರಿಗೆ</verse>
				<verse number="20">ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆ ಉಂಟಾಗಲಿ. ಆಮೆನ್.</verse>
			</chapter>
			<chapter number="4">
				<verse number="1">ಆದ್ದರಿಂದ ನೀವು ಸ್ವೀಕರಿಸಿದ ನಿಮ್ಮ ಕರೆಯುವಿಕೆಗೆ ಯೋಗ್ಯರಾಗಿ ಬಾಳಬೇಕೆಂದು ಕರ್ತನ ಸೆರೆಯಾಳಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.</verse>
				<verse number="2">ನೀವು ಸಂಪೂರ್ಣ ದೀನತ್ವದಿಂದಲೂ ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಒಬ್ಬರನ್ನೊಬ್ಬರು ಪ್ರೀತಿಯಿಂದ ಸಹಿಸಿಕೊಳ್ಳಿರಿ.</verse>
				<verse number="3">ಸಮಾಧಾನದ ಬಂಧನದಲ್ಲಿದ್ದವರಾಗಿ, ಪವಿತ್ರಾತ್ಮ ದೇವರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ.</verse>
				<verse number="4">ಒಂದೇ ನಿರೀಕ್ಷೆಗೆ ನೀವು ಕರೆಹೊಂದಿದಂತೆಯೇ ದೇಹವು ಒಂದೇ, ಪವಿತ್ರಾತ್ಮರು ಒಬ್ಬರೇ,</verse>
				<verse number="5">ಕರ್ತ ಆಗಿರುವವರು ಒಬ್ಬರೇ, ಒಂದೇ ವಿಶ್ವಾಸ, ದೀಕ್ಷಾಸ್ನಾನವೂ ಒಂದೇ,</verse>
				<verse number="6">ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬರೇ; ಅವರೇ ಎಲ್ಲರ ಮೇಲಿರುವರೂ ಎಲ್ಲರ ಮೂಲಕ ಕಾರ್ಯನಡಿಸುವವರೂ ಎಲ್ಲರಲ್ಲಿ ವಾಸಿಸುವವರೂ ಆಗಿದ್ದಾರೆ.</verse>
				<verse number="7">ನಮ್ಮಲ್ಲಿ ಪ್ರತಿಯೊಬ್ಬನಿಗೂ ಕ್ರಿಸ್ತ ಯೇಸುವು ನೀಡಿದ ಅಳತೆಗೆ ಅನುಸಾರವಾಗಿ ವರವನ್ನು ಕೊಡಲಾಗಿದೆ.</verse>
				<verse number="8">ಆದ್ದರಿಂದ ಪವಿತ್ರ ವೇದದಲ್ಲಿ ಹೀಗೆ ಹೇಳಲಾಗಿದೆ: “ಅವರು ಉನ್ನತಸ್ಥಾನಕ್ಕೆ ಏರಿಹೋದಾಗ, ಸೆರೆಯಾಳಾಗಿದ್ದ ಅನೇಕರನ್ನು ಕೊಂಡೊಯ್ದು ತಮ್ಮ ಜನರಿಗೆ ವರದಾನಗಳನ್ನು ಕೊಟ್ಟರು!”</verse>
				<verse number="9">“ಅವರು ಏರಿ ಹೋದರೆಂದು,” ಹೇಳಿದ್ದರ ಅರ್ಥವೇನು? ಭೂಮಿಯ ಭೂಗರ್ಭಕ್ಕೂ ಇಳಿದಿದ್ದರು ಎಂದೂ ಹೇಳಿದ ಹಾಗಾಯಿತಲ್ಲವೇ?</verse>
				<verse number="10">ಇಳಿದು ಬಂದ ಅವರೇ ಮೇಲಣ ಎಲ್ಲಾ ಆಕಾಶಗಳಿಗಿಂತ ಉನ್ನತವಾಗಿ ಏರಿಹೋಗಿ, ಇಡೀ ವಿಶ್ವವನ್ನೇ ತುಂಬಿಕೊಳ್ಳುವುದಕ್ಕಾಗಿ ಮೇಲೆ ಏರಿ ಹೋಗಿದ್ದಾರೆ.</verse>
				<verse number="11">ಕ್ರಿಸ್ತನು ಕೆಲವರನ್ನು ಅಪೊಸ್ತಲರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಕೆಲವರನ್ನು ಉಪದೇಶಿಗಳನ್ನಾಗಿಯೂ ಸಭೆಗೆ ಕೊಟ್ಟರು.</verse>
				<verse number="12">ಕ್ರಿಸ್ತನ ದೇಹವನ್ನು ಕಟ್ಟುವುದಕ್ಕಾಗಿಯೂ ದೇವಜನರನ್ನು ಸೇವಾ ಕೆಲಸಕ್ಕಾಗಿ ಪರಿಣಿತರನ್ನಾಗಿ ಮಾಡುವುದಕ್ಕಾಗಿಯೂ ಕ್ರಿಸ್ತನು ಅವರನ್ನು ಕೊಟ್ಟ ಉದ್ದೇಶವಾಗಿತ್ತು.</verse>
				<verse number="13">ನಾವೆಲ್ಲರೂ ಕ್ರಿಸ್ತನ ಪರಿಪೂರ್ಣತೆಯ ಬೆಳವಣಿಗೆಯಲ್ಲಿ ವಿಶ್ವಾಸದಲ್ಲಿಯೂ ದೇವಪುತ್ರನ ತಿಳುವಳಿಕೆಯಲ್ಲಿ ಒಂದು ಮನಸ್ಸುಳ್ಳವರಾಗಿ ಪರಿಪಕ್ವತೆಯನ್ನು ಹೊಂದುವುದೇ ಆ ಉದ್ದೇಶವಾಗಿತ್ತು.</verse>
				<verse number="14">ಆಗ, ನಾವು ಚಿಕ್ಕಮಕ್ಕಳಂತೆ ಇರುವುದಿಲ್ಲ: ಮನುಷ್ಯರ ವಿವಿಧ ಬೋಧನೆಗಳಿಂದ ಗಾಳಿಯಿಂದ ತೂರಾಡಿಕೊಳ್ಳುವಂತಾಗುವುದಿಲ್ಲ. ಮನುಷ್ಯರ ಕುಯುಕ್ತಿಗೆ, ತಂತ್ರಕ್ಕೆ, ಒಳಸಂಚಿಗೆ ಒಳಗಾಗುವುದಿಲ್ಲ. ಅವರ ಪ್ರತಿಯೊಂದು ಬೋಧನೆಯ ಗಾಳಿಯಿಂದಲೂ ತೂರಾಡಿಕೊಂಡು ಅತ್ತಿತ್ತ ಅಲೆದಾಡುವ ಚಿಕ್ಕಮಕ್ಕಳಂತೆ ಇರಬಾರದು.</verse>
				<verse number="15">ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ, ನಾವು ಎಲ್ಲಾ ವಿಷಯಗಳಲ್ಲಿಯೂ ಕ್ರಿಸ್ತನ ದೇಹದ ಪರಿಪಕ್ವತೆಯೆಡೆಗೆ ಅವರ ಶಿರಸತ್ವದಲ್ಲಿ ಬೆಳೆಯೋಣ.</verse>
				<verse number="16">ಹೀಗೆ ದೇಹವೆಲ್ಲಾ ಕ್ರಿಸ್ತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಣೆಹೊಂದಿ, ಪ್ರತಿ ಅಂಗವೂ ತನ್ನ ಕೆಲಸವನ್ನು ಸೂಕ್ತವಾಗಿ ಮಾಡುವಂತೆ ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿ ಹೊಂದುತ್ತದೆ.</verse>
				<verse number="17">ಆದ್ದರಿಂದ, ಯೆಹೂದ್ಯರಲ್ಲದವರು ವ್ಯರ್ಥ ಆಲೋಚನೆಯುಳ್ಳವರಾಗಿ ಬಾಳುವ ರೀತಿಯಲ್ಲಿ ನೀವು ಇನ್ನು ಮೇಲೆ ಬಾಳದಂತೆ, ಕರ್ತನಲ್ಲಿ ನಾನು ನಿಮಗೆ ಸಾಕ್ಷಿಕೊಟ್ಟು ಹೇಳುತ್ತೇನೆ.</verse>
				<verse number="18">ಅವರು ತಮ್ಮ ಹೃದಯ ಕಠಿಣತ್ವದ ಅಜ್ಞಾನದಿಂದ ತಮ್ಮ ಕತ್ತಲು ಕವಿದ ತಿಳುವಳಿಕೆಯಲ್ಲಿ, ದೇವರ ಜೀವದಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡವರಾಗಿದ್ದಾರೆ.</verse>
				<verse number="19">ಅವರು ಸರ್ವ ಸೂಕ್ಷ್ಮತೆಯನ್ನು ಕಳೆದುಕೊಂಡು, ತಮ್ಮನ್ನು ಕಾಮುಕತನಕ್ಕೆ ಒಪ್ಪಿಸಿಕೊಟ್ಟು, ಎಲ್ಲಾ ಅಶುದ್ಧತ್ವವನ್ನು ಅತ್ಯಾಶೆಯಿಂದ ನಡೆಸುವವರಾಗಿದ್ದಾರೆ.</verse>
				<verse number="20">ನೀವಾದರೋ ಕ್ರಿಸ್ತನನ್ನು ಆ ರೀತಿಯಾಗಿ ಅರಿತುಕೊಳ್ಳಲಿಲ್ಲ.</verse>
				<verse number="21">ನೀವು ಕ್ರಿಸ್ತನ ಬಗ್ಗೆ ಕೇಳಿ ಬೋಧನೆಯನ್ನು ಪಡೆದಾಗ, ಅದು ಯೇಸುವಿನಲ್ಲಿರುವ ಸತ್ಯಕ್ಕೆ ಅನುಸಾರವಾಗಿತ್ತು.</verse>
				<verse number="22">ನಿಮಗೆ ಉಪದೇಶಿಸಿದಂತೆ, ನೀವು ನಿಮ್ಮ ಹಿಂದಿನ ನಡತೆಯ ಪ್ರಕಾರ ಮೋಸಕರವಾದ ಆಶೆಗಳ ಅನುಸಾರವಾಗಿರುವ ಹಳೆಯ ಸ್ವಭಾವವನ್ನು ತೆಗೆದುಹಾಕಬೇಕು.</verse>
				<verse number="23">ಹೀಗೆ ನೀವು ನಿಮ್ಮ ಮನೋಭಾವನೆಯನ್ನು ನವೀಕರಿಸಿಕೊಂಡು;</verse>
				<verse number="24">ಸತ್ಯವಾದ ನೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ದೇವರ ಹೋಲಿಕೆಯ ಪ್ರಕಾರವಾಗಿರಲು ಸೃಷ್ಟಿಸಲಾದ ಹೊಸ ಸ್ವಭಾವವನ್ನು ಧರಿಸಿಕೊಳ್ಳಿರಿ.</verse>
				<verse number="25">ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ. ಏಕೆಂದರೆ ನಾವೆಲ್ಲರೂ ಒಂದೇ ದೇಹದ ಅಂಗಗಳು.</verse>
				<verse number="26">“ಕೋಪ ಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮುಂಚೆ ನಿಮ್ಮ ಕೋಪವು ಇಳಿಯಲಿ.</verse>
				<verse number="27">ಹೀಗೆ ನೀವು ಸೈತಾನನಿಗೆ ಅವಕಾಶಕೊಡಬೇಡಿರಿ.</verse>
				<verse number="28">ಕಳ್ಳತನ ಮಾಡುವವನು ಇನ್ನು ಮೇಲೆ ಕಳ್ಳತನ ಮಾಡದೆ, ಕೈಯಿಂದ ಯಾವುದಾದರೊಂದು ಒಳ್ಳೆಯ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವನಿಗೆ ಕೊಡುವುದಕ್ಕೆ ಅವನಿಂದಾಗುವುದು.</verse>
				<verse number="29">ನಿಮ್ಮ ಬಾಯೊಳಗಿಂದ ಯಾವ ಕೆಟ್ಟಮಾತೂ ಹೊರಡದಿರಲಿ. ಕೇಳುವವರಿಗೆ ಆತ್ಮಿಕ ಹಿತವನ್ನುಂಟು ಮಾಡಿ, ಇತರರಿಗೆ ಅವಶ್ಯವಿರುವ ಮಾತುಗಳನ್ನು ಮಾತ್ರ ಆಡಿರಿ.</verse>
				<verse number="30">ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.</verse>
				<verse number="31">ಎಲ್ಲಾ ಕಹಿತನ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಎಲ್ಲಾ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ.</verse>
				<verse number="32">ನೀವು ದಯೆಯುಳ್ಳವರೂ ಮೃದು ಹೃದಯುಳ್ಳವರೂ ಆಗಿದ್ದು, ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಸಹ ಒಬ್ಬರೊನ್ನಬ್ಬರನ್ನು ಕ್ಷಮಿಸಿರಿ.</verse>
			</chapter>
			<chapter number="5">
				<verse number="1">ಆದ್ದರಿಂದ ನೀವು ದೇವರ ಪ್ರಿಯರಾದ ಮಕ್ಕಳಂತೆ ದೇವರ ಮಾದರಿಯನ್ನು ಅನುಸರಿಸಿ ಬಾಳಿರಿ.</verse>
				<verse number="2">ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.</verse>
				<verse number="3">ಆದರೆ ನಿಮ್ಮೊಳಗೆ ಅನೈತಿಕತೆಯಾಗಲಿ, ಯಾವ ಅಶುದ್ಧತ್ವವಾಗಲಿ, ಇಲ್ಲವೆ ಲೋಭವಾಗಲಿ ಇರಲೇಬಾರದು. ಇವು ದೇವರ ಪರಿಶುದ್ಧರಿಗೆ ಯೋಗ್ಯವಲ್ಲ.</verse>
				<verse number="4">ಅಶ್ಲೀಲತೆ, ಬುದ್ಧಿಹೀನ ಮಾತು, ಅಸಭ್ಯ ಹರಟೆ ಇವು ಬೇಡ, ಇವು ಅಯುಕ್ತವಾಗಿವೆ, ಪ್ರತಿಯಾಗಿ ದೇವರಿಗೆ ಕೃತಜ್ಞತಾ ಸ್ತುತಿಮಾಡಿರಿ.</verse>
				<verse number="5">ಏಕೆಂದರೆ ಯಾವ ಜಾರನಾಗಲಿ, ಅಶುದ್ಧನಾಗಲಿ, ದೇವರಲ್ಲದವುಗಳನ್ನು ಪೂಜಿಸುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಹಕ್ಕುಬಾಧ್ಯತೆಯನ್ನು ಹೊಂದುವುದಿಲ್ಲವೆಂಬುದು ನಿಮಗೆ ಮನದಟ್ಟಾಗಿರಲಿ.</verse>
				<verse number="6">ಪ್ರಯೋಜನವಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ವಂಚಿಸದಿರಲಿ. ಏಕೆಂದರೆ ಇಂಥವುಗಳ ದೆಸೆಯಿಂದ ದೇವರ ಕೋಪಾಗ್ನಿಯು ಅವರಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.</verse>
				<verse number="7">ಆದ್ದರಿಂದ ನೀವು ಅವರೊಂದಿಗೆ ಪಾಲುಗಾರರಾಗಿರಬೇಡಿರಿ.</verse>
				<verse number="8">ನೀವು ಹಿಂದೊಮ್ಮೆ ಕತ್ತಲೆಯಾಗಿದ್ದಿರಿ. ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿದ್ದೀರಿ. ಬೆಳಕಿನ ಮಕ್ಕಳಾಗಿ ಬಾಳಿರಿ.</verse>
				<verse number="9">ಬೆಳಕಿನ ಫಲವು ಎಲ್ಲಾ ಒಳ್ಳೆಯತನದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಇರುತ್ತದೆ.</verse>
				<verse number="10">ಕರ್ತನಿಗೆ ಮೆಚ್ಚಿಗೆಯಾದದ್ದು ಏನೆಂಬುದನ್ನು ಪರಿಶೋಧಿಸಿರಿ.</verse>
				<verse number="11">ನಿಷ್ಪ್ರಯೋಜಕವಾದ ಕತ್ತಲೆಯ ಕಾರ್ಯಗಳೊಂದಿಗೆ ಪಾಲುಗಾರರಾಗಿರದೆ ಅವುಗಳನ್ನು ಬೆಳಕಿಗೆ ತನ್ನಿರಿ.</verse>
				<verse number="12">ಆ ಅವಿಧೇಯರು ಗುಟ್ಟಾಗಿ ಮಾಡುವ ಕೃತ್ಯಗಳನ್ನು ಹೇಳುವುದಕ್ಕೂ ಅವಮಾನಕರವಾಗಿವೆ.</verse>
				<verse number="13">ಆದರೆ, ಬಹಿರಂಗವಾದವುಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ. ಎಲ್ಲವನ್ನೂ ಪ್ರಕಾಶಪಡಿಸುವಂಥದ್ದು ಬೆಳಕೇ.</verse>
				<verse number="14">ಆದ್ದರಿಂದ ಹೀಗೆ ಹೇಳಲಾಗಿದೆ: “ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು, ಕ್ರಿಸ್ತನು ನಿನ್ನ ಮೇಲೆ ಪ್ರಕಾಶಿಸುವನು.”</verse>
				<verse number="15">ಆದಕಾರಣ ನೀವು ಹೇಗೆ ಜೀವಿಸಬೇಕೆಂದು ಜಾಗರೂಕರಾಗಿರಿ. ಅಜ್ಞಾನಿಗಳಂತಿರದೆ, ಜಾಣರಾಗಿ ಜೀವಿಸಿರಿ.</verse>
				<verse number="16">ಈ ದಿನಗಳು ಕೆಟ್ಟವುಗಳಾಗಿರುವುದರಿಂದ, ಸರ್ವ ಸದಾವಕಾಶಗಳನ್ನೂ ಸದ್ವಿನಿಯೋಗಿಸಿಕೊಳ್ಳಿರಿ.</verse>
				<verse number="17">ಆದಕಾರಣ ಬುದ್ಧಿಹೀನರಾಗಿರದೆ ಕರ್ತನ ಚಿತ್ತವೇನೆಂಬುದನ್ನು ತಿಳಿದವರಾಗಿರಿ.</verse>
				<verse number="18">ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದು ದುಷ್ಟತನಕ್ಕೆ ಎಡೆಮಾಡುತ್ತದೆ. ಆದರೆ ಪವಿತ್ರಾತ್ಮರಿಂದ ತುಂಬಿದವರಾಗಿದ್ದು,</verse>
				<verse number="19">ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮನಿಂದಾದ ಹಾಡುಗಳಿಂದಲೂ ಪರಸ್ಪರ ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಾಂತರಾಳದಿಂದ ಕರ್ತನಿಗೆ ಹಾಡಿ ಹರಸಿರಿ.</verse>
				<verse number="20">ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ತಂದೆಯಾದ ದೇವರಿಗೆ, ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ಕೃತಜ್ಞತೆಯನ್ನು ಸಲ್ಲಿಸಿರಿ.</verse>
				<verse number="21">ಇದಲ್ಲದೆ ಕ್ರಿಸ್ತನ ಭಯಭಕ್ತಿಯಲ್ಲಿ ಒಬ್ಬರಿಗೊಬ್ಬರು ಅಧೀನರಾಗಿ ನಡೆದುಕೊಳ್ಳಿರಿ.</verse>
				<verse number="22">ಹೆಂಡತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.</verse>
				<verse number="23">ಏಕೆಂದರೆ, ಕ್ರಿಸ್ತ ಯೇಸು ಸಭೆಗೆ ಶಿರಸ್ಸಾಗಿರುವ ಪ್ರಕಾರ ಗಂಡನು ಹೆಂಡತಿಗೆ ಶಿರಸ್ಸಾಗಿದ್ದಾನೆ. ಕ್ರಿಸ್ತ ಯೇಸು ತಮ್ಮ ಸಭೆ ಎಂಬ ದೇಹಕ್ಕೆ ರಕ್ಷಕರಾಗಿದ್ದಾರೆ.</verse>
				<verse number="24">ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.</verse>
				<verse number="25">ಗಂಡಂದಿರೇ, ಕ್ರಿಸ್ತ ಯೇಸು ಸಭೆಯನ್ನು ಪ್ರೀತಿಸಿ, ಅದಕ್ಕಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟಂತೆಯೇ ನೀವು ನಿಮ್ಮ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.</verse>
				<verse number="26">ಕ್ರಿಸ್ತ ಯೇಸು ತಮ್ಮ ಸಭೆಯನ್ನು ವಾಕ್ಯದ ನೀರಿನ ಸ್ನಾನದಿಂದ ಪವಿತ್ರಗೊಳಿಸಿ, ಶುದ್ಧಮಾಡಿ,</verse>
				<verse number="27">ಅದನ್ನು ಕಳಂಕ, ಸುಕ್ಕು ಇಂಥದ್ದು ಯಾವುದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯನ್ನಾಗಿ ತಮ್ಮ ಮುಂದೆ ನಿಲ್ಲಿಸಿಕೊಳ್ಳಬೇಕೆಂದು ತಮ್ಮನ್ನೇ ಒಪ್ಪಿಸಿಕೊಟ್ಟರು.</verse>
				<verse number="28">ಗಂಡಂದಿರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವಂತೆಯೇ ತಮ್ಮ ಹೆಂಡತಿಯರನ್ನು ಪ್ರೀತಿಸಬೇಕು. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ.</verse>
				<verse number="29">ಏಕೆಂದರೆ, ಯಾರೂ ಸ್ವಂತ ಶರೀರವನ್ನು ಎಂದೂ ದ್ವೇಷಿಸುವುದಿಲ್ಲ, ಬದಲಿಗೆ ತಮ್ಮ ಶರೀರವನ್ನು ಪೋಷಿಸಿ ಸಂರಕ್ಷಿಸುತ್ತಾರೆ. ಅದೇ ಪ್ರಕಾರ ಕರ್ತ ಯೇಸು ಸಭೆಯನ್ನು ಪೋಷಿಸಿ, ಸಂರಕ್ಷಿಸುವವರಾಗಿದ್ದಾರೆ.</verse>
				<verse number="30">ನಾವು ಕ್ರಿಸ್ತ ಯೇಸುವಿನ ದೇಹದ ಅಂಗಗಳಾಗಿದ್ದೇವೆ.</verse>
				<verse number="31">“ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.”</verse>
				<verse number="32">ಈ ರಹಸ್ಯವು ಮಹತ್ತಾದದ್ದು. ಆದರೆ ನಾನು ಕ್ರಿಸ್ತನ ಹಾಗೂ ಸಭೆಯ ವಿಷಯವಾಗಿ ಮಾತನಾಡುತ್ತಿದ್ದೇನೆ.</verse>
				<verse number="33">ಆದರೂ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನನ್ನು ಪ್ರೀತಿಸುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಹೆಂಡತಿಯು ತನ್ನ ಗಂಡನನ್ನು ಗೌರವಿಸುವವಳಾಗಿರಬೇಕು.</verse>
			</chapter>
			<chapter number="6">
				<verse number="1">ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಇದು ಸೂಕ್ತವಾದದ್ದು.</verse>
				<verse number="2">“ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು,” ಎಂಬುದು ವಾಗ್ದಾನ ಸಹಿತವಾದ ಮೊದಲನೆಯ ಆಜ್ಞೆಯಾಗಿದೆ.</verse>
				<verse number="3">“ಸನ್ಮಾನಿಸಿದರೆ ನಿನಗೆ ಶುಭವಾಗುವುದು. ನೀನು ಭೂಮಿಯ ಮೇಲೆ ಬಹುಕಾಲ ಬದುಕುವೆ.”</verse>
				<verse number="4">ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸಬೇಡಿರಿ; ಕರ್ತನ ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಮಕ್ಕಳನ್ನು ಬೆಳೆಸಿರಿ.</verse>
				<verse number="5">ಸೇವಕರೇ, ಭಯಭಕ್ತಿಯಿಂದಲೂ ಸರಳ ಹೃದಯದಿಂದ ಕ್ರಿಸ್ತನಿಗೆ ವಿಧೇಯರಾಗುವ ಪ್ರಕಾರ ಲೌಕಿಕವಾಗಿ ನಿಮ್ಮ ಯಜಮಾನನಾಗಿರುವವರಿಗೆ ವಿಧೇಯರಾಗಿರಿ.</verse>
				<verse number="6">ಯಜಮಾನರನ್ನು ಮೆಚ್ಚಿಸುವವರಂತೆ ಕಣ್ಣಿಗೆ ಕಾಣುವಾಗ ಮಾತ್ರ ಅವರಿಗೆ ಸೇವೆಮಾಡದೆ, ಕ್ರಿಸ್ತನ ದಾಸರಿಗೆ ತಕ್ಕಂತೆ ಮನಃಪೂರ್ವಕವಾಗಿ ದೇವರ ಚಿತ್ತವನ್ನು ನೆರವೇರಿಸಿರಿ.</verse>
				<verse number="7">ನೀವು ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರವೇ ಸೇವೆ ಮಾಡುವಂತೆ, ಪೂರ್ಣಮನಸ್ಸಿನಿಂದ ಸೇವೆಮಾಡಿರಿ.</verse>
				<verse number="8">ದಾಸನಾಗಲಿ, ಸ್ವತಂತ್ರನಾಗಲಿ ತಾನು ಯಾವ ಸತ್ಕಾರ್ಯವನ್ನು ಮಾಡುತ್ತಾನೋ ಅದರ ಪ್ರತಿಫಲವನ್ನು ಕರ್ತ ಯೇಸುವಿನಿಂದ ಹೊಂದುವನೆಂದು ನೀವು ತಿಳಿದಿದ್ದೀರಿ.</verse>
				<verse number="9">ಯಜಮಾನರೇ, ನೀವು ಸಹ ನಿಮ್ಮ ಸೇವಕರೊಡನೆ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೆ ಯಜಮಾನನಿದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿರಿ.</verse>
				<verse number="10">ಕೊನೆಯದಾಗಿ, ಕರ್ತನಲ್ಲಿಯೂ ಅವರ ಪರಾಕ್ರಮ ಶಕ್ತಿಯಲ್ಲಿಯೂ ಬಲಗೊಳ್ಳಿರಿ.</verse>
				<verse number="11">ನೀವು ಪಿಶಾಚನ ತಂತ್ರಗಳನ್ನು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.</verse>
				<verse number="12">ಏಕೆಂದರೆ, ನಾವು ಹೋರಾಡುವುದು ನರಮಾನವರೊಂದಿಗಲ್ಲ, ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಗಳ ಮೇಲೆಯೂ ಆಗಿದೆ.</verse>
				<verse number="13">ಆದುದರಿಂದ ವೈರಿಯು ದಾಳಿಮಾಡುವ ದಿನವು ಬರುವಾಗ ನೀವು ಅವನನ್ನು ಎದುರಿಸಿ ನಿಲ್ಲುವಂತೆಯು, ಎಲ್ಲವನ್ನು ಜಯಿಸಿ ಮುಗಿಸಿದ ಮೇಲೆ ನಿಲ್ಲಲು ಶಕ್ತರಾಗುವಂತೆ, ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.</verse>
				<verse number="14">ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು, ನೀತಿಯೆಂಬ ಕವಚವನ್ನು ಧರಿಸಿಕೊಳ್ಳಿರಿ.</verse>
				<verse number="15">ಸಮಾಧಾನದ ಸುವಾರ್ತೆಯ ಸಿದ್ಧತೆಯೆಂಬ ಪಾದರಕ್ಷೆಗಳನ್ನು ಮೆಟ್ಟಿಕೊಂಡು ನಿಲ್ಲಿರಿ.</verse>
				<verse number="16">ಇವೆಲ್ಲವುಗಳೊಂದಿಗೆ ವಿಶ್ವಾಸವೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಈ ಗುರಾಣಿಯಿಂದಲೇ, ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ನಂದಿಸುವುದಕ್ಕೆ ಶಕ್ತರಾಗುವಿರಿ.</verse>
				<verse number="17">ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಳ್ಳಿರಿ. ದೇವರ ವಾಕ್ಯವೆಂಬ ಪವಿತ್ರಾತ್ಮರ ಖಡ್ಗವನ್ನು ಎತ್ತಿ ಹಿಡಿಯಿರಿ.</verse>
				<verse number="18">ನೀವು ಪವಿತ್ರಾತ್ಮ ದೇವರಲ್ಲಿ ಎಲ್ಲಾ ಸಮಯಗಳಲ್ಲಿಯೂ ಸಕಲ ವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಕರ್ತನ ಜನರೆಲ್ಲರಿಗಾಗಿ ಪ್ರಾರ್ಥನೆ ಮಾಡುತ್ತಾ ಎಚ್ಚರವಾಗಿರಿ.</verse>
				<verse number="19">ನಾನು ಬಾಯಿ ತೆರೆಯುವಾಗ ಸುವಾರ್ತೆಯ ರಹಸ್ಯವನ್ನು ಧೈರ್ಯವಾಗಿ ತಿಳಿಯಪಡಿಸುವುದಕ್ಕೆ ಮಾತನ್ನು ನನಗೆ ದಯಪಾಲಿಸಬೇಕೆಂದು ಪ್ರಾರ್ಥಿಸಿರಿ.</verse>
				<verse number="20">ಏಕೆಂದರೆ ಆ ಸುವಾರ್ತೆಗಾಗಿಯೇ ಸೆರೆಯಲ್ಲಿರುವ ರಾಯಭಾರಿಯಾದ ನಾನು ಅದನ್ನು ಸಾರುವುದರಲ್ಲಿ ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.</verse>
				<verse number="21">ನನ್ನ ವಿಷಯವಾಗಿಯೂ ನಾನು ಮಾಡುತ್ತಿರುವುದರ ವಿಷಯವಾಗಿಯೂ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು.</verse>
				<verse number="22">ನೀವು ನಮ್ಮ ಸಮಾಚಾರವನ್ನು ತಿಳಿದುಕೊಳ್ಳುವಂತೆಯೂ ಅವನು ನಿಮ್ಮ ಹೃದಯಗಳನ್ನು ಉತ್ತೇಜಿಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.</verse>
				<verse number="23">ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ಶಾಂತಿಯೂ ಮತ್ತು ನಂಬಿಕೆಯಿಂದ ಕೂಡಿದ ಪ್ರೀತಿಯೂ ಸಹೋದರರಿಗೆ ಇರಲಿ.</verse>
				<verse number="24">ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಳಿದು ಹೋಗದ ಪ್ರೀತಿಯಿಂದ ಪ್ರೀತಿಸುವವರೆಲ್ಲರ ಮೇಲೆ ಕೃಪೆಯಿರಲಿ.</verse>
			</chapter>
		</book>
		<book number="50">
			<chapter number="1">
				<verse number="1">ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು, ಕ್ರಿಸ್ತ ಯೇಸುವಿನಲ್ಲಿರುವ ಫಿಲಿಪ್ಪಿಯ ದೇವರ ಪರಿಶುದ್ಧರೆಲ್ಲರಿಗೂ, ಅವರೊಂದಿಗಿರುವ ಮೇಲ್ವಿಚಾರಕರಿಗೂ ಸಭಾಸೇವಕರಿಗೂ ಬರೆಯುವ ಪತ್ರ:</verse>
				<verse number="2">ನಮ್ಮ ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.</verse>
				<verse number="3">ನಾನು ನಿಮ್ಮನ್ನು ನೆನೆಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.</verse>
				<verse number="4">ನಾನು ನಿಮ್ಮೆಲ್ಲರಿಗೋಸ್ಕರ ಯಾವಾಗಲೂ ಮಾಡುವ ನನ್ನ ಪ್ರತಿಯೊಂದು ಪ್ರಾರ್ಥನೆಯಲ್ಲಿ ಆನಂದದಿಂದಲೇ ಬೇಡಿಕೊಳ್ಳುವವನಾಗಿದ್ದೇನೆ.</verse>
				<verse number="5">ಏಕೆಂದರೆ, ನೀವು ಮೊದಲನೆಯ ದಿನದಿಂದ ಇಂದಿನವರೆಗೂ ಸುವಾರ್ತೆಯಲ್ಲಿ ಸಹಭಾಗಿಗಳಾಗಿದ್ದೀರಿ.</verse>
				<verse number="6">ಒಳ್ಳೆಯ ಕೆಲಸಗಳನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಕ್ರಿಸ್ತ ಯೇಸುವಿನ ಪುನರಾಗಮನ ದಿನದವರೆಗೆ ಪೂರೈಸುವರು ಎಂಬುದೇ ನನ್ನ ದೃಢ ವಿಶ್ವಾಸವಾಗಿದೆ.</verse>
				<verse number="7">ನಿಮ್ಮೆಲ್ಲರ ವಿಷಯದಲ್ಲಿ ಹೀಗೆ ಯೋಚಿಸುವುದು ನನಗೆ ಸೂಕ್ತವಾಗಿದೆ. ಏಕೆಂದರೆ ನಾನು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ. ನಾನು ಬೇಡಿಗಳಿಂದ ಸೆರೆಯಲ್ಲಿರುವಾಗಲೂ ಸುವಾರ್ತೆಯನ್ನು ಸಮರ್ಥಿಸಿ ದೃಢಪಡಿಸುವಾಗಲೂ ನೀವೆಲ್ಲರು ನನ್ನೊಂದಿಗಿರುವ ಕೃಪೆಯಲ್ಲಿ ಪಾಲುಗಾರರಾಗಿದ್ದೀರಿ.</verse>
				<verse number="8">ಕ್ರಿಸ್ತ ಯೇಸುವಿನ ವಾತ್ಸಲ್ಯದಿಂದ ನಿಮ್ಮೆಲ್ಲರಿಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ. ಇದಕ್ಕೆ ದೇವರೇ ಸಾಕ್ಷಿ.</verse>
				<verse number="9">ನಿಮ್ಮ ಪ್ರೀತಿಯು ಹೆಚ್ಚುತ್ತಾ ಜ್ಞಾನದಲ್ಲಿಯೂ ಒಳನೋಟದಲ್ಲಿಯೂ ಬಹು ಹೆಚ್ಚಾಗಿ ಸಮೃದ್ಧಿಯಾಗಲಿ.</verse>
				<verse number="10">ಆಗ, ಅತ್ಯುತ್ತಮ ಕಾರ್ಯಗಳನ್ನು ನೀವು ವಿವೇಚಿಸಿಕೊಳ್ಳುವಿರಿ. ಕ್ರಿಸ್ತನ ಪುನರಾಗಮನ ದಿನದವರೆಗೆ ನೀವು ಪರಿಶುದ್ಧರಾಗಿಯೂ ನಿರ್ದೋಷಿಗಳಾಗಿಯೂ ಇರಬೇಕೆಂತಲೂ</verse>
				<verse number="11">ದೇವರ ಮಹಿಮೆ ಹಾಗೂ ಸ್ತೋತ್ರಕ್ಕಾಗಿ ಕ್ರಿಸ್ತ ಯೇಸುವಿನ ಮೂಲಕ ಬರುವ ನೀತಿಯ ಫಲಗಳಿಂದ ತುಂಬಿದವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.</verse>
				<verse number="12">ಪ್ರಿಯರೇ, ನನಗೆ ಸಂಭವಿಸಿದ ಸಂಕಟಗಳು ಸುವಾರ್ತೆಯ ಪ್ರಗತಿಗಾಗಿಯೇ ಅನುಕೂಲವಾಯಿತು ಎಂಬುದನ್ನು ನೀವು ತಿಳಿಯಬೇಕೆಂದು ನಾನು ಅಪೇಕ್ಷಿಸುತ್ತೇನೆ.</verse>
				<verse number="13">ಹೇಗೆಂದರೆ, ನಾನು ಸೆರೆಯಲ್ಲಿರುವುದು ಕ್ರಿಸ್ತನ ನಿಮಿತ್ತವೇ ಎಂದು ಇಡೀ ರಾಜಭವನದಲ್ಲಿಯೂ ಮಿಕ್ಕಾದವರೆಲ್ಲರಿಗೂ ಚೆನ್ನಾಗಿ ತಿಳಿದಿದೆ.</verse>
				<verse number="14">ನಾನು ಸೆರೆಯಲ್ಲಿರುವುದರಿಂದಲೇ ಕರ್ತ ದೇವರಲ್ಲಿರುವ ಅನೇಕ ಸಹೋದರರು ಭಯವಿಲ್ಲದೆಯೂ ಭರವಸೆಯಿಂದಲೂ ಸುವಾರ್ತೆಯ ವಾಕ್ಯವನ್ನು ಮಾತನಾಡುವುದಕ್ಕೆ ಪ್ರೋತ್ಸಾಹ ಹೊಂದಿದ್ದಾರೆ.</verse>
				<verse number="15">ಕೆಲವರು ಅಸೂಯೆಯಿಂದಲೂ ಸ್ಪರ್ಧೆಯ ಮನೋಭಾವನೆಯಿಂದಲೂ ಕ್ರಿಸ್ತನನ್ನು ಸಾರುವುದು ನಿಜ. ಆದರೆ ಇತರರು ಒಳ್ಳೆಯ ಮನೋಭಾವದಿಂದ ಕ್ರಿಸ್ತ ಯೇಸುವನ್ನು ಸಾರುತ್ತಿದ್ದಾರೆ.</verse>
				<verse number="16">ಇವರಾದರೋ, ನಾನು ಸುವಾರ್ತೆಗಾಗಿ ನೇಮಕವಾಗಿದ್ದೇವೆಂದು ತಿಳಿದು ಪ್ರೀತಿಯಿಂದ ಸಾರುತ್ತಾರೆ.</verse>
				<verse number="17">ಅವರಾದರೋ, ನಾನು ಬೇಡಿಗಳಿಂದ ಸೆರೆಮನೆಯಲ್ಲಿರುವಾಗ ಸಂಕಟವನ್ನು ಹೆಚ್ಚಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧ ಪಡಿಸದೆ ಪ್ರತಿಸ್ಪರ್ಧೆಗಾಗಿ ಸಾರುತ್ತಾರೆ.</verse>
				<verse number="18">ಹೇಗಾದರೇನು? ಕಪಟದಿಂದಾಗಲಿ, ಸತ್ಯದಿಂದಾಗಲಿ ಯಾವ ರೀತಿಯಿಂದಾದರೂ ಕ್ರಿಸ್ತನನ್ನು ಅವರು ಸಾರುತ್ತಿರುವುದೇ ನನಗೆ ಸಂತೋಷ. ಹೌದು ಮುಂದೆಯೂ ಸಂತೋಷಿಸುವೆನು.</verse>
				<verse number="19">ನಿಮ್ಮ ಪ್ರಾರ್ಥನೆಯಿಂದಲೂ ಕ್ರಿಸ್ತ ಯೇಸು ಕೊಡುವ ಪವಿತ್ರಾತ್ಮರ ಸಹಾಯದಿಂದ ನನಗೆ ಸಂಭವಿಸಿದವುಗಳು ನನ್ನ ಬಿಡುಗಡೆಗಾಗಿಯೇ ಎಂದು ನಾನು ಬಲ್ಲೆನು.</verse>
				<verse number="20">ಹೇಗೆಂದರೆ, ನಾನು ಯಾವ ವಿಷಯದಲ್ಲೂ ನಾಚಿಕೆಪಡದೆ ಎಂದಿನಂತೆ ಈಗಲೂ ಪೂರ್ಣ ಧೈರ್ಯದಿಂದಿರುವಂತೆಯೇ ಬದುಕಿದರೂ ಸತ್ತರೂ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂಬುದೇ ನನ್ನ ಬಯಕೆಯೂ ನಿರೀಕ್ಷೆಯೂ ಆಗಿದೆ.</verse>
				<verse number="21">ನನಗಂತೂ ಬದುಕುವುದೆಂದರೆ ಕ್ರಿಸ್ತನೇ, ಸಾಯುವುದು ಲಾಭವೇ,</verse>
				<verse number="22">ಶರೀರದಲ್ಲಿಯೇ ಬದುಕುವುದು ನನಗೆ ಫಲದಾಯಕವಾದ ಪ್ರಯಾಸವಾಗಿದ್ದರೆ, ನಾನು ಯಾವುದನ್ನು ಆರಿಸಿಕೊಳ್ಳಬೇಕೋ ನನಗೆ ತಿಳಿಯದು.</verse>
				<verse number="23">ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ. ಇಲ್ಲಿಂದ ಹೊರಟು ಕ್ರಿಸ್ತನೊಡನೆ ಇರಬೇಕೆಂಬ ಆಶೆಯಿದೆ. ಅದು ಬಹು ಉತ್ತಮವಾಗಿರುವುದು.</verse>
				<verse number="24">ಆದರೂ ನಾನು ಶರೀರದಲ್ಲಿಯೇ ಉಳಿದಿರುವುದು ನಿಮಗೋಸ್ಕರ ಬಹು ಅವಶ್ಯಕವಾಗಿದೆ.</verse>
				<verse number="25">ನಿಮಗೆ ನಂಬಿಕೆಯಲ್ಲಿ ಅಭಿವೃದ್ಧಿಯೂ ಸಂತೋಷವೂ ಉಂಟಾಗುವುದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರೊಡನೆ ಇರುವೆನೆಂದು ನಿಶ್ಚಯವಾಗಿ ತಿಳಿದಿದ್ದೇನೆ.</verse>
				<verse number="26">ಹೀಗೆ ನಾನು ಪುನಃ ನಿಮ್ಮ ಬಳಿಗೆ ಬರುವುದರಿಂದ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಸಂತೋಷವು ನನ್ನ ನಿಮಿತ್ತವಾಗಿ ಅತ್ಯಧಿಕವಾಗಿರುವುದು.</verse>
				<verse number="27">ಏನೇ ಸಂಭವಿಸಿದರೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿ, ದೂರದಲ್ಲಿದ್ದು ನಿಮ್ಮ ವಿಷಯವಾಗಿ ಕೇಳಿದರೂ ಸರಿ, ನೀವು ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗಾಗಿ ಒಂದೇ ಮನಸ್ಸಿನಿಂದ ಒಟ್ಟಿಗೆ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.</verse>
				<verse number="28">ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಿಯೂ ಅಂಜದೆ ಧೈರ್ಯದಿಂದಿರಿ. ನೀವು ಧೈರ್ಯದಿಂದಿರುವುದು, ಅವರ ವಿನಾಶಕ್ಕೂ, ನಿಮ್ಮ ರಕ್ಷಣೆಗೂ ದೇವರಿಂದಾದ ಸೂಚನೆಯಾಗಿದೆ.</verse>
				<verse number="29">ನೀವು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಡುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವುದೂ ನಿಮಗೆ ದಾನವಾಗಿ ಕೊಡಲಾಗಿದೆ.</verse>
				<verse number="30">ನೀವು ನನ್ನಲ್ಲಿ ಕಂಡು, ಈಗ ನನ್ನಲ್ಲಿರುವುದೆಂದು ಕೇಳುತ್ತಿರುವ ಅದೇ ಹೋರಾಟದ ಅನುಭವವೇ ನಿಮಗೂ ಇದೆ.</verse>
			</chapter>
			<chapter number="2">
				<verse number="1">ನೀವು ಕ್ರಿಸ್ತನೊಂದಿಗೆ ಐಕ್ಯವಾಗಿರುವುದರಿಂದ ಉತ್ತೇಜನ, ಅವರ ಪ್ರೀತಿಯಿಂದ ಸಂತೈಸುವಿಕೆ, ಆತ್ಮನಲ್ಲಿ ಅನ್ಯೋನ್ಯತೆ, ಕನಿಕರದ ವಾತ್ಸಲ್ಯಗಳು ಇರುವುದಾದರೆ,</verse>
				<verse number="2">ನೀವು ಒಂದೇ ಮನಸ್ಸು, ಒಂದೇ ಪ್ರೀತಿ, ಆತ್ಮ, ಹಾಗೂ ಒಂದೇ ಗುರಿಯುಳ್ಳವರಾಗಿ, ನನ್ನ ಸಂತೋಷವನ್ನು ಪರಿಪೂರ್ಣಗೊಳಿಸಿರಿ.</verse>
				<verse number="3">ಸ್ವಾರ್ಥ ಉದ್ದೇಶದಿಂದಾಗಲಿ, ವ್ಯರ್ಥ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ ಪ್ರತಿಯೊಬ್ಬನೂ ದೀನತ್ವದಿಂದ ಮತ್ತೊಬ್ಬನನ್ನು ತನಗಿಂತಲೂ ಶ್ರೇಷ್ಠನೆಂದು ಎಣಿಸಲಿ.</verse>
				<verse number="4">ಪ್ರತಿಯೊಬ್ಬನೂ ಸ್ವಹಿತವನ್ನು ನೋಡದೆ ಪರಹಿತವನ್ನು ಸಹ ನೋಡಲಿ.</verse>
				<verse number="5">ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿಯೂ ಇರಲಿ:</verse>
				<verse number="6">ಅವರು ದೇವರ ಸ್ವರೂಪವಾಗಿದ್ದರೂ, ದೇವರಿಗೆ ಸಮಾನರಾಗಿರುವುದನ್ನು ಬಿಡಲೊಲ್ಲೆನೆಂದು ಎಣಿಸದೆ,</verse>
				<verse number="7">ತಮ್ಮನ್ನು ತಾವೇ ಬರಿದುಮಾಡಿಕೊಂಡು ಗುಲಾಮನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದರು.</verse>
				<verse number="8">ಹೀಗೆ ಅವರು ಆಕಾರದಲ್ಲಿ ಮನುಷ್ಯರಾಗಿ ಕಾಣಿಸಿಕೊಂಡಾಗ ತಮ್ಮನ್ನು ತಾವೇ ತಗ್ಗಿಸಿಕೊಂಡು ಮರಣವನ್ನು ಎಂದರೆ ಶಿಲುಬೆಯ ಮರಣವನ್ನೂ ಹೊಂದುವಷ್ಟು ವಿಧೇಯರಾದರು.</verse>
				<verse number="9">ಈ ಕಾರಣದಿಂದಲೇ ದೇವರು ಅವರನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಅವರಿಗೆ ದಯಪಾಲಿಸಿದ್ದಾರೆ.</verse>
				<verse number="10">ಆದ್ದರಿಂದ ಪರಲೋಕ, ಭೂಲೋಕ, ಭೂಮಿಯ ಕೆಳಗಿರುವವರೆಲ್ಲರೂ ಯೇಸುವಿನ ಹೆಸರಿನಲ್ಲಿ ಮೊಣಕಾಲೂರಿ,</verse>
				<verse number="11">ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತದೇವರು ಎಂಬುದಾಗಿ ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವುದು.</verse>
				<verse number="12">ಹೀಗಿರುವಲ್ಲಿ ನನ್ನ ಪ್ರಿಯ ಸ್ನೇಹಿತರೇ, ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ನೀವು ಯಾವಾಗಲೂ ನನಗೆ ವಿಧೇಯರಾದಂತೆ ಈಗಲೂ ವಿಧೇಯರಾಗಿ, ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ರಕ್ಷಣೆಯನ್ನು ಕಾರ್ಯರೂಪಕ್ಕೆ ತನ್ನಿರಿ.</verse>
				<verse number="13">ಏಕೆಂದರೆ, ತಮ್ಮ ಸದುದ್ದೇಶವನ್ನು ನೆರವೇರಿಸುವಂತೆ ನಿಮ್ಮಲ್ಲಿ ಬಯಕೆಯನ್ನೂ ಕಾರ್ಯಸಾಧನೆಯನ್ನೂ ನಿರ್ಮಿಸುವವರು ದೇವರೇ.</verse>
				<verse number="14">ಗೊಣಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನೂ ಮಾಡಿರಿ.</verse>
				<verse number="15">ಹೀಗೆ ನೀವು ನಿಂದಾರಹಿತರೂ ದೋಷವಿಲ್ಲದವರೂ, “ನಿಷ್ಕಳಂಕರಾದ ದೇವರ ಮಕ್ಕಳಾಗಿ, ವಕ್ರವಾದ ದುಷ್ಟ ಜನಾಂಗದ ಮಧ್ಯದಲ್ಲಿ,” ಜೀವವಾಕ್ಯವನ್ನು ಹಿಡಿದುಕೊಂಡು, ಲೋಕದಲ್ಲಿ ನಕ್ಷತ್ರಗಳಂತೆ ಹೊಳೆಯುವವರಾಗಿರುವಿರಿ.</verse>
				<verse number="16">ನೀವು ಜೀವವಾಕ್ಯವನ್ನು ಹಿಡಿದವರಾಗಿದ್ದರೆ, ಹೀಗೆ ನಾನು ಓಡಿದ ಓಟವೂ ಪ್ರಯಾಸವೂ ವ್ಯರ್ಥವಾಗಲಿಲ್ಲವೆಂದು ತಿಳಿದು ಕ್ರಿಸ್ತನ ಪುನರಾಗಮನ ದಿನದಲ್ಲಿ ಅಭಿಮಾನ ಪಡುವೆನು.</verse>
				<verse number="17">ನಿಮ್ಮ ವಿಶ್ವಾಸದಿಂದ ಬರುವ ಯಜ್ಞದ ಮೇಲೆಯೂ ಸೇವೆಯ ಮೇಲೆಯೂ ನಾನು ಪಾನಸಮರ್ಪಣೆಯಾದರೂ ಸಹ ಹರ್ಷದಿಂದ ನಿಮ್ಮೆಲ್ಲರೊಡನೆ ಆನಂದಿಸುವೆನು.</verse>
				<verse number="18">ಇದಕ್ಕಾಗಿಯೇ ನೀವೂ ಹರ್ಷಿಸಿರಿ. ನನ್ನೊಡನೆ ಆನಂದಿಸಿರಿ.</verse>
				<verse number="19">ನಾನು ತಿಮೊಥೆಯನನ್ನು ಬೇಗನೆ ನಿಮ್ಮ ಬಳಿಗೆ ಕಳುಹಿಸುವುದಕ್ಕೆ ಕರ್ತ ಯೇಸುವಿನಲ್ಲಿ ನಿರೀಕ್ಷಿಸುತ್ತೇನೆ. ಹೀಗೆ ಅವನ ಮುಖಾಂತರ ನಿಮ್ಮ ವಿಷಯವನ್ನು ತಿಳಿದು ನಾನು ಸಹ ಉತ್ತೇಜನಗೊಳ್ಳುವೆನು.</verse>
				<verse number="20">ಅವನ ಹಾಗೆ ನಿಮ್ಮ ಯೋಗಕ್ಷೇಮವನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು, ನನ್ನ ಬಳಿ ಬೇರೆ ಯಾರೂ ಇಲ್ಲ.</verse>
				<verse number="21">ಎಲ್ಲರೂ ಸ್ವಕಾರ್ಯಗಳನ್ನೇ ಹುಡುಕುತ್ತಾರೆಯೇ ಹೊರತು ಕ್ರಿಸ್ತ ಯೇಸುವಿನ ಕಾರ್ಯಗಳನ್ನು ಹುಡುಕುವುದಿಲ್ಲ.</verse>
				<verse number="22">ಆದರೆ ತಿಮೊಥೆಯನ ಗುಣಸ್ವಭಾವವನ್ನು ನೀವು ಬಲ್ಲಿರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಶ್ರಮಿಸಿದ್ದಾನೆ.</verse>
				<verse number="23">ಆದ್ದರಿಂದ ನನಗೆ ಏನು ಸಂಭವಿಸುವುದು ಎಂದು ತಿಳಿದ ಕೂಡಲೇ ಅವನನ್ನು ಕಳುಹಿಸುವ ನಿರೀಕ್ಷೆಯಿದೆ.</verse>
				<verse number="24">ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತ ದೇವರಲ್ಲಿ ಭರವಸೆಯುಳ್ಳವನಾಗಿದ್ದೇನೆ.</verse>
				<verse number="25">ಆದರೂ ನನ್ನ ಸಹೋದರನೂ ಜೊತೆ ಕೆಲಸದವನೂ ಸಹಸೈನಿಕನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ನಾನು ನೆನೆಸಿದ್ದೇನೆ. ಅವನು ನನ್ನ ಕೊರತೆಯಲ್ಲಿ ಸೇವೆ ಮಾಡುವಂತೆ ನೀವು ಕಳುಹಿಸಿದ ನಿಮ್ಮ ಸಂದೇಶಕನೂ ಆಗಿದ್ದಾನೆ.</verse>
				<verse number="26">ಏಕೆಂದರೆ ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದಾನೆ. ತಾನು ಅಸ್ವಸ್ಥನಾದ ಸುದ್ದಿಯು ನಿಮಗೆ ಮುಟ್ಟಿತೆಂದು ತಿಳಿದು ತುಂಬಾ ವ್ಯಸನಪಡುತ್ತಿದ್ದಾನೆ.</verse>
				<verse number="27">ಅವನು ಅಸ್ವಸ್ಥನಾಗಿ ಸಾಯುವ ಹಾಗೆ ಇದ್ದದ್ದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದರು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನು ಕರುಣಿಸಿದರು.</verse>
				<verse number="28">ಆದ್ದರಿಂದ ನೀವು ಅವನನ್ನು ನೋಡಿ ಪುನಃ ಆನಂದಿಸುವಂತೆಯೂ ನನಗೆ ದುಃಖ ಕಡಿಮೆಯಾಗುವಂತೆಯೂ ನಾನು ಅವನನ್ನು ಅತ್ಯಾಸಕ್ತಿಯಿಂದ ಕಳುಹಿಸಿದ್ದೇನೆ.</verse>
				<verse number="29">ನೀವು ಅವನನ್ನು ಪೂರ್ಣ ಆನಂದದಿಂದ ಕರ್ತನಲ್ಲಿ ಸೇರಿಸಿಕೊಳ್ಳಿರಿ ಮತ್ತು ಅಂಥವರನ್ನು ಸನ್ಮಾನಿಸಿರಿ.</verse>
				<verse number="30">ಅವನು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಹಾಗಿದ್ದನು. ನೀವು ನನಗೆ ಮಾಡಲು ಸಾಧ್ಯವಾಗದೆ ಹೋದ ಸಹಾಯವನ್ನು ತಾನೇ ಪೂರ್ತಿ ಮಾಡುವುದಕ್ಕಾಗಿ, ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಗುರಿಪಡಿಸಿಕೊಂಡನು.</verse>
			</chapter>
			<chapter number="3">
				<verse number="1">ಕಡೆಯದಾಗಿ ನನ್ನ ಪ್ರಿಯರೇ, ಕರ್ತನಲ್ಲಿ ಆನಂದಿಸಿರಿ. ಬರೆದದ್ದನ್ನೇ ನಿಮಗೆ ಬರೆಯುವುದರಲ್ಲಿ ನನಗೆ ಬೇಸರವಿಲ್ಲ, ಅದು ನಿಮಗೆ ಸುರಕ್ಷಿತವೇ.</verse>
				<verse number="2">ನಾಯಿಗಳಂತೆ ವರ್ತಿಸುವವರಿಗೆ ಎಚ್ಚರಿಕೆ. ದುಷ್ಟಕಾರ್ಯಮಾಡುವವರಿಗೆ ಎಚ್ಚರಿಕೆ, ಸುಳ್ಳು ಸುನ್ನತಿಗಾಗಿ ವಾಗ್ವಾದಿಸುವವರಿಗೆ ಎಚ್ಚರಿಕೆ.</verse>
				<verse number="3">ಏಕೆಂದರೆ ದೇವರನ್ನು ಪವಿತ್ರಾತ್ಮರಿಂದ ಆರಾಧಿಸಿ ಕ್ರಿಸ್ತ ಯೇಸುವನ್ನು ಮಹಿಮೆಪಡಿಸುತ್ತಾ ಹರ್ಷಗೊಳ್ಳುವವರೂ ಮಾಂಸದಲ್ಲಿ ಭರವಸೆಯಿಡದ ನಾವೇ ಸುನ್ನತಿಯಾಗಿದ್ದೇವೆ.</verse>
				<verse number="4">ಮಾಂಸದಲ್ಲಿ ಭರವಸೆ ಇಡಲು ನನಗೆ ಸಾಕಷ್ಟು ಕಾರಣಗಳಿವೆ. ಬೇರೆ ಯಾವನಾದರೂ ಮಾನವೀಯ ಪ್ರಯತ್ನಗಳಲ್ಲಿ ಭರವಸೆ ಇಡಬಹುದೆಂದು ಭಾವಿಸುವುದಾದರೆ, ನಾನು ಅದಕ್ಕಿಂತಲೂ ಹೆಚ್ಚಾಗಿ ಹೇಳಬಹುದು:</verse>
				<verse number="5">ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು, ನಾನು ಇಸ್ರಾಯೇಲ್ ವಂಶದವನು; ಬೆನ್ಯಾಮೀನನ ಕುಲದವನು; ಹೀಬ್ರಿಯರಿಂದ ಹುಟ್ಟಿದ ಹೀಬ್ರಿಯನು; ಮೋಶೆಯ ನಿಯಮದ ಅನುಸಾರವಾಗಿ ನಾನು ಫರಿಸಾಯನು.</verse>
				<verse number="6">ಆಸಕ್ತಿಯನ್ನು ನೋಡಿದರೆ, ನಾನು ಸಭೆಯ ಹಿಂಸಕನು; ಮೋಶೆಯ ನಿಯಮದಲ್ಲಿರುವ ನೀತಿಯ ಅನುಸಾರವಾಗಿ ನಾನು ನಿರ್ದೋಷಿ.</verse>
				<verse number="7">ನನಗೆ ಲಾಭವಾಗಿದ್ದ ಎಲ್ಲವನ್ನೂ ಈಗ ನಾನು ಕ್ರಿಸ್ತನ ನಿಮಿತ್ತ ನಷ್ಟವೆಂದು ಎಣಿಸುತ್ತೇನೆ.</verse>
				<verse number="8">ಇದಲ್ಲದೆ, ನನ್ನ ಕರ್ತದೇವರು ಆಗಿರುವ ಕ್ರಿಸ್ತ ಯೇಸುವನ್ನು ಅರಿತುಕೊಳ್ಳುವುದೇ ಅತಿ ಶ್ರೇಷ್ಠವಾದುದ್ದೆಂದು, ನಾನು ಎಲ್ಲವನ್ನೂ ನಷ್ಟವೆಂದು ಎಣಿಸುತ್ತೇನೆ. ಕ್ರಿಸ್ತನನ್ನೇ ಲಾಭವನ್ನಾಗಿಸಿಕೊಳ್ಳಲು ನಾನು ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.</verse>
				<verse number="9">ಹೀಗೆ ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ಅವರಲ್ಲಿ ಒಂದಾಗಿರ ಬಯಸುತ್ತೇನೆ. ನಿಯಮದಿಂದ ಬರುವ ಸ್ವನೀತಿಯನ್ನು ಆಶ್ರಯಿಸಿಕೊಳ್ಳದೆ, ಕ್ರಿಸ್ತನನ್ನು ನಂಬುವುದರ ಮೂಲಕ ವಿಶ್ವಾಸದ ಆಧಾರದ ಮೇಲೆ ದೇವರು ಕೊಡುವ ನೀತಿಯನ್ನೇ ಹೊಂದಿದವನಾಗಿರ ಬಯಸುತ್ತೇನೆ.</verse>
				<verse number="10">ಕ್ರಿಸ್ತನನ್ನೂ ಅವರ ಪುನರುತ್ಥಾನದ ಶಕ್ತಿಯನ್ನೂ ನಾನು ಅರಿತುಕೊಂಡು, ಕ್ರಿಸ್ತನ ಶ್ರಮೆಯಲ್ಲಿ ಪಾಲುಗೊಳ್ಳುವ ಅನ್ಯೋನ್ಯತೆಯನ್ನೂ ಅವರ ಮರಣದಲ್ಲಿ ಅವರ ಹಾಗೆ ಆಗುವುದನ್ನೂ ತಿಳಿಯುವುದೇ ನನ್ನ ಅಪೇಕ್ಷೆ.</verse>
				<verse number="11">ಹೇಗಾದರೂ, ನಾನೂ ಸಹ ಸತ್ತವರೊಳಗಿಂದ ಪುನರುತ್ಥಾನ ಹೊಂದುವೆನು.</verse>
				<verse number="12">ಇದನ್ನೆಲ್ಲಾ ನಾನು ಸಾಧಿಸಿದ್ದೇನೆಂದಲ್ಲ ಅಥವಾ ಈಗಲೇ ನಾನು ಪರಿಪೂರ್ಣನಾಗಿದ್ದೇನೆಂದೂ ನಾನು ಹೇಳುತ್ತಾ ಇಲ್ಲ. ಆದರೆ ಕ್ರಿಸ್ತ ಯೇಸು ನನ್ನನ್ನು ಅನುಸರಿಸಬೇಕೆಂದು ಯಾವುದಕ್ಕಾಗಿ ಆರಿಸಿಕೊಂಡರೋ, ಆ ಪೂರ್ಣತೆಯೆಡೆಗೆ ತಲುಪುವಂತೆ ನಾನು ಪರಿಶ್ರಮಿಸುತ್ತಿದ್ದೇನೆ.</verse>
				<verse number="13">ಪ್ರಿಯರೇ, ನಾನಂತೂ ಆ ಗುರಿಯನ್ನು ತಲುಪಿದ್ದೇನೆಂದು ಭಾವಿಸಿಕೊಂಡಿಲ್ಲ. ಆದರೆ ಒಂದು ಸಂಗತಿ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು, ಮುಂದಿನ ವಿಷಯಗಳನ್ನು ಮಾತ್ರ ಲಕ್ಷ್ಯವನ್ನಾಗಿ ಮಾಡಿಕೊಂಡು ಅದನ್ನೇ ಪಡೆದುಕೊಳ್ಳುವುದಕ್ಕಾಗಿ ಓಡುತ್ತಿದ್ದೇನೆ.</verse>
				<verse number="14">ಹೀಗೆ ನಾನು ಕ್ರಿಸ್ತ ಯೇಸುವಿನಲ್ಲಿ ದೇವರ ಸ್ವರ್ಗೀಯ ಕರೆಯ ಬಹುಮಾನದ ಗುರಿಯೆಡೆಗೆ ಮುಂದೆ ಸಾಗುತ್ತಾ ಇದ್ದೇನೆ.</verse>
				<verse number="15">ಆದ್ದರಿಂದ ನಮ್ಮಲ್ಲಿ ಆತ್ಮಿಕ ಪರಿಪಕ್ವತೆಯುಳ್ಳವರು ಇದೇ ಮನೋಭಾವವುಳ್ಳವರಾಗಿರಬೇಕು. ಕೆಲವು ವಿಷಯಗಳ ಮೇಲೆ ಭಿನ್ನಾಭಿಪ್ರಾಯವಿದ್ದರೆ, ಅದನ್ನೂ ದೇವರು ನಿಮಗೆ ಸ್ಪಷ್ಟಪಡಿಸುವರು.</verse>
				<verse number="16">ಆದರೂ ಈಗಾಗಲೇ ನಾವು ಯಾವುದರಲ್ಲಿ ಮುಂದುವರೆದಿದ್ದೇವೋ ಆ ಸೂತ್ರದ ಪ್ರಕಾರ ಒಂದೇ ಮನಸ್ಸುಳ್ಳವರಾಗಿ ಬಾಳೋಣ.</verse>
				<verse number="17">ಪ್ರಿಯರೇ, ನೀವು ನನ್ನನ್ನು ಅನುಸರಿಸುವವರಾಗಿರಿ. ನಮ್ಮ ಹಾಗೆ ಬಾಳುವ ಆದರ್ಶದ ಪ್ರಕಾರ ನಡೆದುಕೊಳ್ಳುವವರನ್ನು ಗಮನಿಸಿರಿ.</verse>
				<verse number="18">ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ಬಾಳುತ್ತಿದ್ದಾರೆ. ಅವರ ವಿಷಯದಲ್ಲಿ ನಾನು ನಿಮಗೆ ಹಲವಾರು ಸಾರಿ ತಿಳಿಸಿರುವಂತೆ ಈಗಲೂ ಕಣ್ಣೀರಿನಿಂದ ಹೇಳುತ್ತೇನೆ.</verse>
				<verse number="19">ವಿನಾಶನವೇ ಅವರ ಅಂತ್ಯವು. ಹೊಟ್ಟೆಯೇ ಅವರ ದೇವರು. ನಾಚಿಕೆ ಕಾರ್ಯಗಳಲ್ಲಿಯೇ ಅವರ ಪ್ರಭಾವ. ಅವರು ಲೌಕಿಕವಾದವುಗಳ ಮೇಲೆ ಮನಸ್ಸಿಡುತ್ತಾರೆ.</verse>
				<verse number="20">ಆದರೆ ನಮ್ಮ ಪೌರತ್ವವು ಪರಲೋಕದಲ್ಲಿದೆ. ನಾವು ಪರಲೋಕದಿಂದಲೇ ರಕ್ಷಕರಾಗಿರುವ ಒಬ್ಬರ ಬರುವಿಕೆಗಾಗಿ ಆತುರದಿಂದ ಎದುರುನೋಡುತ್ತಿದ್ದೇವೆ. ಅವರೇ ಕರ್ತದೇವರು ಆಗಿರುವ ಕ್ರಿಸ್ತ ಯೇಸು.</verse>
				<verse number="21">ಹೀಗೆ ಕ್ರಿಸ್ತ ಯೇಸು ಎಲ್ಲವನ್ನೂ ತಮಗೆ ಅಧೀನ ಮಾಡಿಕೊಳ್ಳುವ ತಮ್ಮ ಶಕ್ತಿಯ ಪ್ರಕಾರ, ಮಹಿಮೆಯುಳ್ಳ ತಮ್ಮ ದೇಹಕ್ಕೆ ಸಮವಾಗಿ ಸಾರೂಪ್ಯವಾಗುವಂತೆ ದೀನಾವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸುವರು.</verse>
			</chapter>
			<chapter number="4">
				<verse number="1">ಹೀಗಿರಲಾಗಿ, ನನಗೆ ಆಪ್ತರೂ ನಾನು ಹಂಬಲಿಸುವವರೂ ಆದ ನನ್ನ ಪ್ರಿಯರೇ, ನನ್ನ ಆನಂದವೂ ಕಿರೀಟವೂ ಆಗಿರುವ ಸ್ನೇಹಿತರೇ, ಈಗಲೂ ಕರ್ತ ದೇವರಲ್ಲಿ ದೃಢವಾಗಿ ನಿಲ್ಲಿರಿ!</verse>
				<verse number="2">ಕರ್ತ ದೇವರಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.</verse>
				<verse number="3">ಜೀವಗ್ರಂಥದಲ್ಲಿ ಹೆಸರು ಬರೆದಿರುವ ಕ್ಲೇಮೆನ್ಸ್ ಮುಂತಾದ ನನ್ನ ಜೊತೆ ಕೆಲಸದವರೊಡನೆ ನನ್ನೊಂದಿಗೆ ಸುವಾರ್ತೆಗೋಸ್ಕರ ಪ್ರಯಾಸಪಟ್ಟ ಆ ಸ್ತ್ರೀಯರಿಗೆ ನೀನೂ ಸಹಾಯಕನಾಗಿರಬೇಕೆಂದು ನಿಜ ಜೊತೆಗಾರನೇ, ನಿನ್ನನ್ನೂ ಕೇಳಿಕೊಳ್ಳುತ್ತೇನೆ.</verse>
				<verse number="4">ಯಾವಾಗಲೂ ಕರ್ತ ದೇವರಲ್ಲಿ ಆನಂದಿಸಿರಿ, ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.</verse>
				<verse number="5">ನಿಮ್ಮ ಸಹನೆಯು ಎಲ್ಲರಿಗೂ ತಿಳಿದಿರಲಿ. ಕರ್ತದೇವರ ಬರುವಿಕೆಯು ಹತ್ತಿರವಾಗಿದೆ.</verse>
				<verse number="6">ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.</verse>
				<verse number="7">ಆಗ ಎಲ್ಲಾ ಗ್ರಹಿಕೆಯನ್ನೂ ಮೀರುವ ದೇವರ ಸಮಾಧಾನವು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವುದು.</verse>
				<verse number="8">ಕಡೆಯದಾಗಿ ಪ್ರಿಯರೇ, ಯಾವುದು ಸತ್ಯವೂ ಯಾವುದು ಮಾನ್ಯವೂ ಯಾವುದು ನ್ಯಾಯವೂ ಯಾವುದು ಶುದ್ಧವೂ ಯಾವುದು ಪ್ರೀತಿಕರವೂ ಯಾವುದು ಮನೋಹರವೂ ಯಾವುದು ಉತ್ತಮವಾದದ್ದೋ ಯಾವುದು ಕೀರ್ತಿಗೆ ಯೋಗ್ಯವೋ ಅವೆಲ್ಲವುಗಳನ್ನೇ ಆಲೋಚಿಸಿರಿ.</verse>
				<verse number="9">ನೀವು ಯಾವುದನ್ನು ನನ್ನಿಂದ ಕಲಿತು ಹೊಂದಿದ್ದೀರೋ ಮತ್ತು ಯಾವುದನ್ನು ನನ್ನಲ್ಲಿ ಕೇಳಿ ಕಂಡಿದ್ದೀರೋ ಅದನ್ನೇ ಮಾಡುವವರಾಗಿರಿ. ಆಗ ಸಮಾಧಾನದ ದೇವರು ನಿಮ್ಮೊಂದಿಗಿರುವರು.</verse>
				<verse number="10">ಅಂತೂ ಕೊನೆಯದಾಗಿ ನನ್ನ ಬಗ್ಗೆ ನಿಮಗಿರುವ ಆಸಕ್ತಿಯು ಪುನಃ ಚಿಗುರಿದ್ದಕ್ಕಾಗಿ ಕರ್ತ ದೇವರಲ್ಲಿ ಬಹಳವಾಗಿ ಆನಂದಿಸುತ್ತೇನೆ. ನೀವು ನನ್ನ ಬಗ್ಗೆ ಆಸಕ್ತಿ ಮೊದಲಿನಿಂದ ಹೊಂದಿದ್ದರೂ ಅದನ್ನು ತೋರಿಸಲು ನಿಮಗೆ ಸೂಕ್ತ ಅವಕಾಶ ಸಿಕ್ಕಿರಲಿಲ್ಲ.</verse>
				<verse number="11">ನನಗೆ ಕೊರತೆಯಿದೆ ಎಂಬುದಕ್ಕಾಗಿ ನಾನು ಇದನ್ನು ಹೇಳುತ್ತಿಲ್ಲ. ಯಾವುದೇ ಪರಿಸ್ಥಿತಿಯಲ್ಲಿ ಸಂತೃಪ್ತನಾಗಿರುವುದನ್ನು ನಾನು ಕಲಿತುಕೊಂಡಿದ್ದೇನೆ.</verse>
				<verse number="12">ಕೊರತೆಯಲ್ಲಾಗಲಿ, ಸಮೃದ್ಧಿಯಲ್ಲಾಗಲಿ ಹೇಗೆ ಜೀವಿಸಬೇಕೆಂಬ ಅನುಭವವನ್ನು ತಿಳಿದುಕೊಂಡಿದ್ದೇನೆ. ಚೆನ್ನಾಗಿ ಊಟಮಾಡಿರಲಿ, ಹಸಿವೆಯಿಂದಿರಲಿ, ಸಮೃದ್ಧಿಯುಳ್ಳವನಾಗಿರಲಿ, ಕೊರತೆಯುಳ್ಳವನಾಗಿರಲಿ, ಯಾವುದೇ ಪರಿಸ್ಥಿತಿಯಲ್ಲಿದ್ದರೂ ಎಲ್ಲಾ ಪರಿಸ್ಥಿತಿಗಳಲ್ಲಿ ತೃಪ್ತನಾಗಿರುವ ರಹಸ್ಯವನ್ನು ಕಲಿತುಕೊಂಡಿದ್ದೇನೆ.</verse>
				<verse number="13">ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.</verse>
				<verse number="14">ಹೀಗಿದ್ದರೂ, ನನ್ನ ತೊಂದರೆಗಳಲ್ಲಿ ನೀವು ಭಾಗವಹಿಸಿದ್ದು ಒಳ್ಳೆಯದಾಯಿತು.</verse>
				<verse number="15">ಫಿಲಿಪ್ಪಿಯವರೇ, ನಾನು ಪ್ರಾರಂಭ ದಿನಗಳಲ್ಲಿ ನಿಮ್ಮ ನಡುವೆ ಸುವಾರ್ತೆ ಸಾರಿ ಮಕೆದೋನ್ಯದಿಂದ ಹೊರಟುಹೋದಾಗ, ನಿಮ್ಮನ್ನು ಬಿಟ್ಟು ಬೇರಾವ ಸಭೆಯವರು ಕೊಡುವ ಮತ್ತು ತೆಗೆದುಕೊಳ್ಳುವ ವಿಷಯದಲ್ಲಿ ಯಾರೂ ನನ್ನೊಂದಿಗೆ ಪಾಲುಗಾರರಾಗಲಿಲ್ಲ ಎಂಬುದನ್ನು ನೀವು ತಿಳಿದುಕೊಂಡಿದ್ದೀರಿ.</verse>
				<verse number="16">ನಾನು ಥೆಸಲೋನಿಕದಲ್ಲಿದ್ದಾಗಲೂ ನನಗೆ ಕೊರತೆಯಾದಾಗ ನೀವು ಒಂದೆರಡು ಬಾರಿ ಸಹಾಯ ಕಳುಹಿಸಿದಿರಿ.</verse>
				<verse number="17">ನಾನು ನಿಮ್ಮಿಂದ ದಾನವನ್ನು ನಿರೀಕ್ಷಿಸುವುದಿಲ್ಲ. ಆದರೆ ನಿಮ್ಮ ಲೆಕ್ಕಕ್ಕೆ ಲಾಭ ಹೆಚ್ಚಿಸುವುದನ್ನೇ ನೋಡುತ್ತಿದ್ದೇನೆ.</verse>
				<verse number="18">ನಾನು ಎಲ್ಲವನ್ನೂ ಪರಿಪೂರ್ಣವಾಗಿ ಹೊಂದಿದ್ದೇನೆ. ನನಗೆ ಅಗತ್ಯಕ್ಕಿಂತಲೂ ಹೆಚ್ಚು ದೊರೆತಿದೆ. ನೀವು ಎಪಫ್ರೊದೀತನಿಂದ ಕಳುಹಿಸುವವುಗಳು ಈಗ ನನಗೆ ತಲುಪಿದೆ; ನಿಮ್ಮ ಕೊಡುಗೆ ದೇವರನ್ನು ಮೆಚ್ಚಿಸುವ ಸುಗಂಧ ಕಾಣಿಕೆಯೂ ಸ್ವೀಕೃತವಾದ ಯಜ್ಞವೂ ಆಗಿರುತ್ತವೆ.</verse>
				<verse number="19">ನನ್ನ ದೇವರು, ಕ್ರಿಸ್ತ ಯೇಸುವಿನಲ್ಲಿರುವ ತಮ್ಮ ಮಹಿಮೆಯ ಐಶ್ವರ್ಯಕ್ಕೆ ತಕ್ಕಂತೆಯೇ ನಿಮ್ಮ ಎಲ್ಲಾ ಕೊರತೆಗಳನ್ನು ನೀಗಿಸುವರು.</verse>
				<verse number="20">ನಮ್ಮ ತಂದೆ ದೇವರಿಗೆ ನಿರಂತರವೂ ಮಹಿಮೆಯಾಗಲಿ. ಆಮೆನ್.</verse>
				<verse number="21">ಕ್ರಿಸ್ತ ಯೇಸುವಿನಲ್ಲಿರುವ ಎಲ್ಲಾ ದೇವಜನರಿಗೂ ವಂದನೆಗಳನ್ನು ಹೇಳಿರಿ. ನನ್ನ ಜೊತೆಯಲ್ಲಿರುವ ಸಹೋದರರೂ ಸಹೋದರಿಯರೂ ವಂದನೆಗಳನ್ನು ತಿಳಿಸುತ್ತಾರೆ.</verse>
				<verse number="22">ಎಲ್ಲಾ ದೇವಜನರೂ ವಿಶೇಷವಾಗಿ ಕೈಸರನ ಮನೆತನಕ್ಕೆ ಸೇರಿದವರೂ ನಿಮಗೆ ವಂದನೆಗಳನ್ನು ತಿಳಿಸುತ್ತಾರೆ.</verse>
				<verse number="23">ಕರ್ತದೇವರು ಆಗಿರುವ ಕ್ರಿಸ್ತ ಯೇಸುವಿನ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ. ಆಮೆನ್.</verse>
			</chapter>
		</book>
		<book number="51">
			<chapter number="1">
				<verse number="1">ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ,</verse>
				<verse number="2">ಕ್ರಿಸ್ತನಲ್ಲಿರುವ ಕೊಲೊಸ್ಸೆಯ ದೇವರ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರ ಸಹೋದರಿಯರಿಗೆ: ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.</verse>
				<verse number="3">ನಾವು ನಿಮಗಾಗಿ ಪ್ರಾರ್ಥನೆ ಮಾಡುವಾಗ, ನಮ್ಮ ಕರ್ತ ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.</verse>
				<verse number="4">ಏಕೆಂದರೆ, ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆ ಹಾಗೂ ದೇವಜನರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿ ನಾವು ಕೇಳಿದ್ದೇವೆ.</verse>
				<verse number="5">ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಲಾದ ನಿರೀಕ್ಷೆಯಿಂದಲೇ ಈ ವಿಶ್ವಾಸವೂ ಪ್ರೀತಿಯೂ ಬುಗ್ಗೆಯಾಗಿ ಒದಗಿಬರುತ್ತದೆ. ಈ ನಿರೀಕ್ಷೆಯ ಬಗ್ಗೆ ಸುವಾರ್ತೆಯ ಸತ್ಯ ಸಂದೇಶವನ್ನು ಮೊದಲೇ ನೀವು ಕೇಳಿದ್ದೀರಿ.</verse>
				<verse number="6">ಆ ಸುವಾರ್ತೆಯು ಲೋಕದಲ್ಲೆಲ್ಲಾ ಹರಡಿದಂತೆ, ನಿಮಗೂ ತಲುಪಲು ನೀವು ಸಹ ಅದನ್ನು ಕೇಳಿ ದೇವರ ಕೃಪೆಯನ್ನು ನಿಜವಾಗಿಯೂ ತಿಳಿದುಕೊಂಡ ದಿವಸದಿಂದ ನಿಮ್ಮಲ್ಲಿಯೂ ಫಲಕೊಟ್ಟು ವೃದ್ಧಿಯಾಗುತ್ತಿದೆ.</verse>
				<verse number="7">ಇದನ್ನು ನೀವು ನಮ್ಮ ಪ್ರೀತಿಯ ಜೊತೆ ಸೇವಕನಾದ ಎಪಫ್ರನಿಂದ ಕಲಿತುಕೊಂಡಿರಿ. ಅವನು ನಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು.</verse>
				<verse number="8">ಪವಿತ್ರಾತ್ಮರಿಂದ ನೀವು ಹೊಂದಿರುವ ಪ್ರೀತಿಯನ್ನು ನಮಗೆ ತಿಳಿಸಿದವನೂ ಅವನೇ.</verse>
				<verse number="9">ಆದಕಾರಣ ನಾವೂ ಸಹ ನಿಮ್ಮ ಬಗ್ಗೆ ಕೇಳಿದ ದಿನದಿಂದ ನಿಮಗಾಗಿ ಪ್ರಾರ್ಥಿಸುವುದನ್ನು ಬಿಡಲಿಲ್ಲ. ನೀವು ದೇವರಾತ್ಮ ನೀಡುವ ಜ್ಞಾನವನ್ನೂ ಗ್ರಹಿಕೆಯನ್ನೂ ಹೊಂದಿ, ದೇವರ ಚಿತ್ತದ ತಿಳುವಳಿಕೆಯಿಂದ ತುಂಬಿರಬೇಕೆಂದು ನಾವು ದೇವರಿಗೆ ಬೇಡಿಕೊಳ್ಳುತ್ತಿದ್ದೇವೆ.</verse>
				<verse number="10">ಕರ್ತ ಯೇಸುವಿಗೆ ಯೋಗ್ಯರಾಗಿ ಜೀವಿಸಿ ಎಲ್ಲಾ ವಿಧದಲ್ಲಿ ಅವರನ್ನೇ ಮೆಚ್ಚಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯದಲ್ಲಿ ಫಲಕೊಡುತ್ತಾ ದೇವರ ತಿಳುವಳಿಕೆಯಲ್ಲಿ ವೃದ್ಧಿಯಾಗುತ್ತಿರಬೇಕೆಂತಲೂ</verse>
				<verse number="11">ದೇವರ ಮಹಿಮೆಯ ಪರಾಕ್ರಮದಿಂದ ಬರುವ ಸರ್ವಶಕ್ತಿಯನ್ನು ಹೊಂದಿ ಬಲಗೊಳ್ಳಲಿ ಎಂದು ಬೇಡಿಕೊಳ್ಳುತ್ತೇವೆ. ಆಗ ನೀವು ಸರ್ವತಾಳ್ಮೆಯನ್ನೂ ದೀರ್ಘಶಾಂತಿಯನ್ನೂ ಹೊಂದಿದವರಾಗಿ,</verse>
				<verse number="12">ತಂದೆಯಾದ ದೇವರಿಗೆ ಹರ್ಷದಿಂದ ಕೃತಜ್ಞತೆಯನ್ನು ಸಲ್ಲಿಸುವಿರಿ. ಬೆಳಕಿನಲ್ಲಿರುವ ದೇವಭಕ್ತರ ಬಾಧ್ಯತೆಯಲ್ಲಿ ಪಾಲುಗಾರರಾಗುವುದಕ್ಕೆ ತಂದೆಯು ನಿಮ್ಮನ್ನು ಯೋಗ್ಯರನ್ನಾಗಿ ಮಾಡಿದ್ದಾರೆ.</verse>
				<verse number="13">ತಂದೆಯು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತಮ್ಮ ಪ್ರಿಯ ಪುತ್ರ ಕ್ರಿಸ್ತ ಯೇಸುವಿನ ರಾಜ್ಯದೊಳಗೆ ಸೇರಿಸಿದರು.</verse>
				<verse number="14">ಕ್ರಿಸ್ತ ಯೇಸುವಿನಲ್ಲಿಯೇ ನಮಗೆ ವಿಮೋಚನೆ ಉಂಟಾಯಿತು. ನಮ್ಮ ಪಾಪಗಳ ಕ್ಷಮೆಯೇ ಆ ವಿಮೋಚನೆಯಾಗಿರುತ್ತದೆ.</verse>
				<verse number="15">ಕ್ರಿಸ್ತ ಯೇಸು ಅದೃಶ್ಯರಾದ ದೇವರ ಸ್ವರೂಪವೂ ಸರ್ವಸೃಷ್ಟಿಗು ಜ್ಯೇಷ್ಠ ಪುತ್ರರೂ ಆಗಿದ್ದಾರೆ.</verse>
				<verse number="16">ಏಕೆಂದರೆ ಭೂಪರಲೋಕಗಳಲ್ಲಿರುವ ಕಾಣುವಂತವುಗಳಾಗಲಿ, ಕಾಣದಂತವುಗಳಾಗಲಿ ಸಮಸ್ತವು ಇವರ ಮೂಲಕವೇ ಸೃಷ್ಟಿಸಲಾಯಿತು. ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಕ್ರಿಸ್ತನಲ್ಲಿಯೇ ಸೃಷ್ಟಿಗೊಂಡವು. ಸರ್ವವೂ ಕ್ರಿಸ್ತರಿಂದಲೂ ಕ್ರಿಸ್ತರಿಗಾಗಿಯೂ ಸೃಷ್ಟಿಹೊಂದಿತು.</verse>
				<verse number="17">ಕ್ರಿಸ್ತ ಯೇಸು ಎಲ್ಲದಕ್ಕೂ ಮೊದಲು ಇದ್ದವರು, ಇವರಲ್ಲಿಯೇ ಸಮಸ್ತವೂ ನೆಲೆಯಾಗಿದೆ.</verse>
				<verse number="18">ಕ್ರಿಸ್ತ ಯೇಸು ಸಭೆಯೆಂಬ ದೇಹಕ್ಕೆ ಶಿರಸ್ಸಾಗಿದ್ದಾರೆ. ಎಲ್ಲದರಲ್ಲಿಯೂ ಇವರೇ ಪ್ರಥಮ ಸ್ಥಾನಹೊಂದಿರುವಂತೆ, ಆರಂಭವೂ ಸತ್ತು ಎದ್ದು ಬಂದವರಲ್ಲಿ ಪ್ರಥಮವಾದವರು ಆಗಿದ್ದಾರೆ. ಹೀಗೆ ಇವರು ಎಲ್ಲದರಲ್ಲಿಯೂ ಸರ್ವಶ್ರೇಷ್ಠರಾಗಿದ್ದಾರೆ.</verse>
				<verse number="19">ಏಕೆಂದರೆ ದೇವರು ಕ್ರಿಸ್ತ ಯೇಸುವಿನಲ್ಲಿ ಸರ್ವಸಂಪೂರ್ಣತೆಯು ವಾಸವಾಗಿರಲು ಬಯಸಿದರು.</verse>
				<verse number="20">ಕ್ರಿಸ್ತ ಯೇಸು ಶಿಲುಬೆಯ ಮೇಲೆ ಸುರಿಸಿದ ರಕ್ತದ ಮೂಲಕವಾಗಿ, ದೇವರು ಸಮಾಧಾನವನ್ನು ಉಂಟುಮಾಡಿ, ಕ್ರಿಸ್ತನ ಮೂಲಕವೇ ಭೂಪರಲೋಕಗಳಲ್ಲಿರುವ ಎಲ್ಲವನ್ನೂ ತಮ್ಮೊಂದಿಗೆ ಸಂಧಾನಪಡಿಸಿಕೊಂಡರು.</verse>
				<verse number="21">ಹಿಂದಿನ ಕಾಲದಲ್ಲಿ ನೀವು ನಿಮ್ಮ ದುಷ್ಕೃತ್ಯಗಳ ನಿಮಿತ್ತ ದೇವರಿಂದ ದೂರವಿದ್ದವರೂ ಮನಸ್ಸಿನಲ್ಲಿ ದೇವರ ಶತ್ರುಗಳೂ ಆಗಿದ್ದೀರಿ.</verse>
				<verse number="22">ಈಗಲಾದರೋ ದೇವರು ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿಂದಾರಹಿತರನ್ನಾಗಿಯೂ ತಮ್ಮ ಸನ್ನಿಧಿಯಲ್ಲಿ ನಿಲ್ಲಿಸಿಕೊಳ್ಳುವಂತೆ, ಕ್ರಿಸ್ತನ ಮಾಂಸದೇಹದ ಮರಣದಿಂದ ಈಗ ನಿಮ್ಮನ್ನು ಸಂಧಾನಪಡಿಸಿಕೊಂಡಿದ್ದಾರೆ.</verse>
				<verse number="23">ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು.</verse>
				<verse number="24">ಈಗ ನಾನು ನಿಮಗೋಸ್ಕರ ಸಹಿಸುತ್ತಿರುವ ಬಾಧೆಗಳಲ್ಲಿ ಆನಂದಿಸುತ್ತೇನೆ. ಕ್ರಿಸ್ತ ಯೇಸುವಿನ ಸಂಕಟಗಳೊಳಗೆ ಇನ್ನೂ ಕೊರತೆಯಾಗಿರುವುದನ್ನು ಅವರ ದೇಹವಾಗಿರುವ ಸಭೆಗಾಗಿ ನನ್ನ ದೇಹದಲ್ಲಿ ತೀರಿಸುತ್ತೇನೆ.</verse>
				<verse number="25">ನಿಮಗೋಸ್ಕರವಾಗಿ ನನಗೆ ದೇವರು ಕೊಟ್ಟಿರುವ ಜವಾಬ್ದಾರಿಗೆ ಅನುಸಾರವಾಗಿ, ದೇವರ ವಾಕ್ಯವನ್ನು ಸಂಪೂರ್ಣವಾಗಿ ಸಾರಲು ನಾನು ಸಭೆಗೆ ಸೇವಕನಾದೆನು.</verse>
				<verse number="26">ಆ ರಹಸ್ಯವು ಹಿಂದಿನ ಯುಗಗಳಿಂದಲೂ ತಲತಲಾಂತರಗಳಿಂದಲೂ ಮರೆಯಾಗಿತ್ತು. ಆದರೂ ಈಗ ಅದು ಕರ್ತ ಯೇಸುವಿನ ಜನರಿಗೆ ಪ್ರಕಟವಾಗಿದೆ.</verse>
				<verse number="27">ಯೆಹೂದ್ಯರಲ್ಲದವರಲ್ಲಿ ಆ ರಹಸ್ಯದ ಮಹಿಮೆಯ ಐಶ್ವರ್ಯವು ಎಷ್ಟೆಂಬುದನ್ನು ದೇವರು ತಮ್ಮ ಜನರಿಗೆ ಪ್ರಕಟಿಸುವುದಕ್ಕೆ ಮನಸ್ಸು ಮಾಡಿದ್ದಾರೆ. ಆ ರಹಸ್ಯವು ಏನೆಂದರೆ, ನಿಮ್ಮಲ್ಲಿರುವ ಕ್ರಿಸ್ತ ಯೇಸು ಮಹಿಮೆಯ ನಿರೀಕ್ಷೆಯಾಗಿದ್ದಾರೆ ಎಂಬುದೇ.</verse>
				<verse number="28">ಈ ಕ್ರಿಸ್ತ ಯೇಸುವನ್ನೇ ನಾವು ಸಾರುವವರಾಗಿದ್ದೇವೆ; ಪ್ರತಿಯೊಬ್ಬರೂ ಕ್ರಿಸ್ತ ಯೇಸುವಿನಲ್ಲಿ ಪರಿಪಕ್ವತೆಯುಳ್ಳವರಾಗಿ ಸಮರ್ಪಿಸುವಂತೆ, ಪ್ರತಿಯೊಬ್ಬರನ್ನೂ ಎಚ್ಚರಿಸಿ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬರಿಗೂ ಬೋಧಿಸುತ್ತಿದ್ದೇವೆ.</verse>
				<verse number="29">ನನ್ನಲ್ಲಿ ಬಲದಿಂದ ಕಾರ್ಯ ಮಾಡುವ ಕ್ರಿಸ್ತನ ಶಕ್ತಿಗೆ ಅನುಸಾರವಾಗಿ, ನಾನೂ ಸಹ ಪ್ರಯಾಸ ಪಡುತ್ತಾ ಈ ಗುರಿಗಾಗಿ ಹೋರಾಡುತ್ತೇನೆ.</verse>
			</chapter>
			<chapter number="2">
				<verse number="1">ನಿಮಗಾಗಿಯೂ ಲವೊದಿಕೀಯದವರಿಗಾಗಿಯೂ ವೈಯಕ್ತಿಕವಾಗಿ ಭೇಟಿಯಾಗದವರಿಗಾಗಿಯೂ ನಾನು ಎಷ್ಟು ಶ್ರಮಿಸುತ್ತಿದ್ದೇನೆ ಎಂಬುದನ್ನು ನೀವು ತಿಳಿದಿರಬೇಕೆಂದು ನಾನು ಅಪೇಕ್ಷಿಸುತ್ತೇನೆ.</verse>
				<verse number="2">ಅವರು ಹೃದಯದಲ್ಲಿ ಉತ್ತೇಜನಗೊಂಡು, ಪ್ರೀತಿಯಲ್ಲಿ ಒಂದಾಗಿ, ದೇವರ ರಹಸ್ಯವಾಗಿರುವ ಕ್ರಿಸ್ತ ಯೇಸುವನ್ನು ತಿಳಿದುಕೊಳ್ಳುವಂತೆ ಪೂರ್ಣಜ್ಞಾನದ ಸರ್ವ ಐಶ್ವರ್ಯವನ್ನು ದೃಢವಾಗಿ ಹೊಂದಬೇಕೆಂಬುದೇ ನನ್ನ ಗುರಿಯಾಗಿದೆ.</verse>
				<verse number="3">ಏಕೆಂದರೆ, ಜ್ಞಾನ ಮತ್ತು ತಿಳುವಳಿಕೆಯ ಎಲ್ಲಾ ನಿಕ್ಷೇಪಗಳೂ ಕ್ರಿಸ್ತ ಯೇಸುವಿನಲ್ಲಿಯೇ ಮರೆಯಾಗಿವೆ.</verse>
				<verse number="4">ಯಾರೂ ತಮ್ಮ ತರ್ಕದ ನಯಮಾತುಗಳಿಂದ ನಿಮ್ಮನ್ನು ವಂಚಿಸಬಾರದೆಂದು ನಾನು ಇದನ್ನು ಹೇಳುತ್ತಿದ್ದೇನೆ.</verse>
				<verse number="5">ನಾನು ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ ಆತ್ಮದಲ್ಲಿ ನಿಮ್ಮೊಂದಿಗಿದ್ದು ನೀವು ಎಷ್ಟು ಕ್ರಮವುಳ್ಳವರೆಂಬುದನ್ನೂ, ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಶ್ವಾಸ ಎಷ್ಟು ದೃಢವಾಗಿದೆ ಎಂಬುದನ್ನೂ, ನೋಡಿ ನನಗೆ ಆನಂದವಾಗುತ್ತದೆ.</verse>
				<verse number="6">ಆದ್ದರಿಂದ ನೀವು ಕ್ರಿಸ್ತ ಯೇಸುವನ್ನು ಕರ್ತ ಎಂದು ಅಂಗೀಕರಿಸಿದಂತೆಯೇ ಅವರಲ್ಲಿ ಬಾಳಿರಿ.</verse>
				<verse number="7">ನೀವು ಕ್ರಿಸ್ತ ಯೇಸುವಿನಲ್ಲಿ ಬೇರೂರಿದವರಾಗಿಯೂ ಕಟ್ಟಲಾದವರಾಗಿಯೂ ಇದ್ದು, ನಿಮಗೆ ಬೋಧನೆ ನೀಡಿದ ಪ್ರಕಾರ ನಿಮ್ಮ ವಿಶ್ವಾಸದಲ್ಲಿ ಬಲಹೊಂದಿ ಕೃತಜ್ಞತೆಯಿಂದ ತುಂಬಿ ಪ್ರವಾಹಿಸುವವರಾಗಿರಿ.</verse>
				<verse number="8">ತತ್ವಜ್ಞಾನವೂ ನಿರರ್ಥಕವೂ ವಂಚನೆಯೂ ಆಗಿರುವ ಮನುಷ್ಯರ ಸಂಪ್ರದಾಯದಿಂದ ನಿಮ್ಮಲ್ಲಿ ಯಾರಾದರೂ ಬಂದು ನಿಮ್ಮನ್ನು ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಅಂಥವರು ಕ್ರಿಸ್ತ ಯೇಸುವನ್ನು ಅನುಸರಿಸದೆ, ಪ್ರಾಪಂಚಿಕ ಬಾಲಬೋಧನೆಗಳನ್ನೂ ಅನುಸರಿಸುವವರಾಗಿದ್ದಾರೆ.</verse>
				<verse number="9">ಏಕೆಂದರೆ ದೇವರ ಸರ್ವಸಂಪೂರ್ಣತೆಯು ಮಾನವ ದೇಹವಾಗಿ ಕ್ರಿಸ್ತ ಯೇಸುವಿನಲ್ಲಿಯೇ ವಾಸಮಾಡಿದೆ.</verse>
				<verse number="10">ನೀವು ಕ್ರಿಸ್ತ ಯೇಸುವಿನಲ್ಲಿ ಪರಿಪೂರ್ಣರಾಗಿದ್ದೀರಿ. ಅವರೇ ಎಲ್ಲಾ ಆಳಿಕೆಗೂ, ಅಧಿಕಾರಕ್ಕೂ ಶಿರಸ್ಸಾಗಿದ್ದಾರೆ.</verse>
				<verse number="11">ನೀವು ಕ್ರಿಸ್ತ ಯೇಸುವಿನಲ್ಲಿ ಸ್ವೀಕರಿಸಿದ ಸುನ್ನತಿಯು ಕೈಯಿಂದ ಮಾಡಿದ್ದಲ್ಲ, ಅದು ನಿಮ್ಮ ಮಾಂಸಭಾವವನ್ನು ಆಳುವ ಇಡೀ ಸ್ವಾರ್ಥವನ್ನೇ ಬಿಟ್ಟುಬಿಡುವ ಆತ್ಮಿಕ ಸುನ್ನತಿಯಾಗಿದೆ.</verse>
				<verse number="12">ದೀಕ್ಷಾಸ್ನಾನದಲ್ಲಿ ಕ್ರಿಸ್ತ ಯೇಸುವಿನೊಂದಿಗೆ ಸಮಾಧಿಯಾದಿರಿ ಮತ್ತು ಕ್ರಿಸ್ತ ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ನೀವು ಕ್ರಿಸ್ತ ಯೇಸುವಿನೊಂದಿಗೆ ಮರಣದಿಂದ ಜೀವಂತವಾಗಿ ಎದ್ದು ಬಂದಿರಿ.</verse>
				<verse number="13">ನಿಮ್ಮ ಪಾಪಗಳಿಂದಲೂ ನಿಮ್ಮ ಸುನ್ನತಿಯಿಲ್ಲದ ಪಾಪ ಸ್ವಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತ ಯೇಸುವಿನೊಂದಿಗೆ ಜೀವಿತರನ್ನಾಗಿ ಮಾಡಿ ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದರು.</verse>
				<verse number="14">ನಮಗೆ ವಿರೋಧವಾಗಿ ನಿಂತು ನಮ್ಮ ಮೇಲೆ ತಪ್ಪು ಹೊರಿಸುವಂತೆ ಬರೆಯಲಾಗಿದ್ದ ಶಾಸನಗಳನ್ನು ಕ್ರಿಸ್ತ ಯೇಸು ರದ್ದುಮಾಡಿದರು. ಅವುಗಳನ್ನು ಶಿಲುಬೆಯ ಮೇಲೆ ಜಡಿದು ಇಲ್ಲದಂತೆ ಮಾಡಿದರು.</verse>
				<verse number="15">ಕ್ರಿಸ್ತ ಯೇಸುವು ಆಳುವ ಅದೃಶ್ಯ ಶಕ್ತಿಗಳನ್ನೂ ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ ಶಿಲುಬೆಯಲ್ಲಿ ಅವುಗಳ ಮೇಲೆ ಜಯಹೊಂದಿ, ಬಹಿರಂಗವಾಗಿ ಪ್ರದರ್ಶಿಸಿದರು.</verse>
				<verse number="16">ಹೀಗಿರಲಾಗಿ, ಅನ್ನಪಾನಗಳ ವಿಷಯದಲ್ಲಿಯೂ ಹಬ್ಬ ಅಮಾವಾಸ್ಯೆ ಸಬ್ಬತ್ ದಿನ ಮುಂತಾದವುಗಳ ವಿಷಯದಲ್ಲಿಯೂ ಯಾರೂ ನಿಮ್ಮನ್ನು ತೀರ್ಪು ಮಾಡದಿರಲಿ.</verse>
				<verse number="17">ಇವು ಬರಬೇಕಾಗಿದ್ದವುಗಳ ಛಾಯೆಯಾಗಿವೆ, ಆದರೆ ನಿಜಸ್ವರೂಪವು ಕ್ರಿಸ್ತ ಯೇಸುವೇ.</verse>
				<verse number="18">ಕೆಲವರು ತಾವು ದರ್ಶನ ಕಂಡದ್ದರ ಬಗ್ಗೆ ಬಹಳ ಮಾತನಾಡಿ, ತಮ್ಮ ನಿರರ್ಥಕವಾದ ಪ್ರಾಪಂಚಿಕ ಬುದ್ಧಿಯಿಂದ ಉಬ್ಬಿಕೊಳ್ಳುತ್ತಾರೆ. ಇಂಥವರು ಕಪಟ ದೀನತೆಯಲ್ಲಿಯೂ ದೂತರ ಆರಾಧನೆಯಲ್ಲಿಯೂ ಆನಂದಿಸುವವರಾಗಿರುತ್ತಾರೆ. ಇವರು ನಿಮ್ಮ ಬಳಿಗೆ, ನೀವು ಪ್ರತಿಫಲಹೊಂದದೆ ಇರುವಂತೆ ಅಡ್ಡಿಮಾಡಲು ಅವಕಾಶಕೊಡಬೇಡಿರಿ.</verse>
				<verse number="19">ಇಂಥವರು ಶಿರಸ್ಸಾಗಿರುವ ಕ್ರಿಸ್ತ ಯೇಸುವಿನನೊಂದಿಗೆ ಸಂಬಂಧ ಕಳೆದುಕೊಂಡವರಾಗಿದ್ದಾರೆ. ಏಕೆಂದರೆ, ಕ್ರಿಸ್ತನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಪೋಷಣೆ ಪಡೆದು ಒಂದಾಗಿ ಜೋಡಿಸಲಾಗಿ ದೇವರು ಬೆಳೆಸುವಂತೆ ಬೆಳೆಯುತ್ತದೆ.</verse>
				<verse number="20">ಪ್ರಾಪಂಚಿಕ ಬಾಲಬೋಧನೆಗಳಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದೀರಿ. ಹಾಗಾದರೆ ನೀವು ಇನ್ನೂ ಪ್ರಾಪಂಚಿಕ ನಿಯಮಗಳಿಗೆ ಅಧೀನರಾಗಿರುವುದೇಕೆ?</verse>
				<verse number="21">“ಹಿಡಿಯಬೇಡ! ರುಚಿನೋಡಬೇಡ! ಮುಟ್ಟಬೇಡ!”</verse>
				<verse number="22">ಈ ಶಾಸನಗಳು ಮಾನವ ಆಜ್ಞೆಗಳ ಹಾಗೂ ಬೋಧನೆಗಳ ಅನುಸಾರವಾಗಿ ಬಳಕೆಯಿಂದ ಅಳಿದುಹೋಗುತ್ತವೆ!</verse>
				<verse number="23">ಇಂಥ ಉಪದೇಶಗಳು ತಾವೇ ತಂದುಕೊಂಡ ಆರಾಧನೆಯಲ್ಲಿಯೂ ಸುಳ್ಳು ದೀನತ್ವದಲ್ಲಿಯೂ ದೇಹದಂಡನೆಯಲ್ಲಿಯೂ ಜ್ಞಾನದ ತೋರಿಕೆಯುಳ್ಳದ್ದಾಗಿರುವುದು ನಿಜವೇ. ಆದರೆ ಇವು ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸಲು ಪ್ರಯೋಜನವಿಲ್ಲದವುಗಳಾಗಿವೆ.</verse>
			</chapter>
			<chapter number="3">
				<verse number="1">ನೀವು ಕ್ರಿಸ್ತನೊಂದಿಗೆ ಜೀವಂತವಾಗಿ ಎದ್ದವರಾಗಿದ್ದರೆ, ಮೇಲಿರುವವುಗಳನ್ನೇ ಹುಡುಕಿರಿ. ಅಲ್ಲಿ ಕ್ರಿಸ್ತ ಯೇಸು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.</verse>
				<verse number="2">ಪರಲೋಕದ ಕಾರ್ಯಗಳ ಮೇಲೆಯೇ ನಿಮ್ಮ ಮನಸ್ಸಿಡಿರಿ, ಭೂಸಂಬಂಧವಾದವುಗಳ ಮೇಲೆ ಮನಸ್ಸಿಡಬೇಡಿರಿ.</verse>
				<verse number="3">ಏಕೆಂದರೆ ನೀವು ಸತ್ತಿರುವಿರಲ್ಲಾ, ನಿಮ್ಮ ಜೀವವು ಕ್ರಿಸ್ತ ಯೇಸುವಿನೊಂದಿಗೆ ದೇವರಲ್ಲಿ ಮರೆಯಾಗಿದೆ.</verse>
				<verse number="4">ನಿಮಗೆ ಜೀವವಾಗಿರುವ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ, ನೀವು ಸಹ ಅವರೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.</verse>
				<verse number="5">ಆದ್ದರಿಂದ ಅನೈತಿಕತೆ, ಅಶುದ್ಧತ್ವ, ಕಾಮಾಭಿಲಾಷೆ, ದುರಾಶೆ, ದೇವರಲ್ಲದವುಗಳನ್ನು ಆರಾಧಿಸುವುದಕ್ಕೆ ಸಮರಾಗಿರುವರು ಲೋಭ ಮುಂತಾದ ನಿಮ್ಮ ಲೌಕಿಕವಾದ ಸ್ವಭಾವಗಳನ್ನು ಸಾಯಿಸಿರಿ.</verse>
				<verse number="6">ಇವುಗಳ ನಿಮಿತ್ತ ದೇವರ ಕೋಪವು ಉಂಟಾಗುತ್ತಲಿದೆ.</verse>
				<verse number="7">ಒಮ್ಮೆ ನೀವೂ ಸಹ ಅಂಥವುಗಳನ್ನು ಅನುಸರಿಸುತ್ತಿದ್ದಾಗ ಅವುಗಳಲ್ಲಿಯೇ ಜೀವಿಸಿದಿರಿ.</verse>
				<verse number="8">ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ, ನಿಮ್ಮ ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ.</verse>
				<verse number="9">ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ನೀವು ಹಳೆಯ ಸ್ವಭಾವವನ್ನು ಅದರ ಕೃತ್ಯಗಳನ್ನು ಕೂಡ ತೆಗೆದು ಹಾಕಿದ್ದೀರಲ್ಲವೇ!</verse>
				<verse number="10">ಸೃಷ್ಟಿಕರ್ತನ ಸ್ವರೂಪವನ್ನು, ತಿಳುವಳಿಕೆಯಲ್ಲಿ ನವೀಕರಣ ಹೊಂದುತ್ತಿರುವ ಆ ನೂತನ ಸ್ವಭಾವವನ್ನೇ ಧರಿಸಿಕೊಂಡವರಾಗಿದ್ದೀರಲ್ಲಾ.</verse>
				<verse number="11">ಯೆಹೂದ್ಯರು ಯೆಹೂದ್ಯರಲ್ಲದವರು, ಸುನ್ನತಿ ಹೊಂದಿದವರು, ಸುನ್ನತಿ ಹೊಂದದವರು, ನಾಗರಿಕ, ಅನಾಗರಿಕ, ಆಳು, ಸ್ವತಂತ್ರರು ಎಂಬ ಭೇದವಿಲ್ಲ. ಆದರೆ ಕ್ರಿಸ್ತ ಯೇಸುವೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.</verse>
				<verse number="12">ಆದಕಾರಣ ದೇವರಿಂದ ಆಯ್ಕೆಯಾದವರೂ ಪರಿಶುದ್ಧರೂ ಪ್ರಿಯರೂ ಆಗಿರುವ ನೀವು ಕನಿಕರ, ದಯೆ, ದೀನತ್ವ, ಸಾತ್ವಿಕತ್ವ, ದೀರ್ಘಶಾಂತಿ ಇವುಗಳನ್ನು ಧರಿಸಿಕೊಳ್ಳಿರಿ.</verse>
				<verse number="13">ಯಾವನಿಗಾದರೂ ಇನ್ನೊಬ್ಬನ ಮೇಲೆ ದೂರು ಇದ್ದರೂ, ಒಬ್ಬರನ್ನೊಬ್ಬರು ಸಹಿಸಿಕೊಂಡು ಕ್ಷಮಿಸಿರಿ. ಕರ್ತ ಯೇಸುವು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.</verse>
				<verse number="14">ಎಲ್ಲದಕ್ಕಿಂತ ಮಿಗಿಲಾಗಿ, ಎಲ್ಲವನ್ನೂ ಪರಿಪೂರ್ಣವಾದ ಐಕ್ಯತೆಯಲ್ಲಿ ಬಂಧಿಸುವ ಪ್ರೀತಿಯನ್ನು ಧರಿಸಿಕೊಳ್ಳಿರಿ.</verse>
				<verse number="15">ಕ್ರಿಸ್ತ ಯೇಸುವಿನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ, ಆ ಸಮಾಧಾನಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲಾಗಿದ್ದೀರಿ. ನೀವು ಕೃತಜ್ಞತೆಯುಳ್ಳವರಾಗಿರಿ.</verse>
				<verse number="16">ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.</verse>
				<verse number="17">ನೀವು ಮಾತಿನಿಂದಾಗಲಿ, ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ, ಕ್ರಿಸ್ತ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.</verse>
				<verse number="18">ಹೆಂಡತಿಯರೇ, ನೀವು ಕರ್ತ ಯೇಸುವಿನಲ್ಲಿ ಯೋಗ್ಯರಾಗಿರುವಂತೆ ನಿಮ್ಮ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.</verse>
				<verse number="19">ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ. ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ.</verse>
				<verse number="20">ಮಕ್ಕಳೇ, ಎಲ್ಲಾ ವಿಧಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ. ಏಕೆಂದರೆ ಇದು ಕರ್ತ ಯೇಸುವಿಗೆ ಬಹು ಮೆಚ್ಚಿಕೆಯಾಗಿದೆ.</verse>
				<verse number="21">ತಂದೆಯರೇ, ನಿಮ್ಮ ಮಕ್ಕಳನ್ನು ರೇಗಿಸಬೇಡಿರಿ. ಹಾಗೆ ಮಾಡಿದರೆ, ಅವರು ನಿರಾಶರಾಗುವರು.</verse>
				<verse number="22">ಸೇವಕರೇ, ಭೂಮಿಯಲ್ಲಿ ನಿಮ್ಮ ಯಜಮಾನರಾಗಿರುವವರು ನೋಡುತ್ತಿರುವಾಗ ಮಾತ್ರ ಸೇವೆ ಮಾಡುವವರಾಗದೆ, ಕರ್ತ ಯೇಸುವಿಗೆ ಭಯಪಡುವವರಾಗಿ ಸರಳ ಹೃದಯದಿಂದ ಕೆಲಸಮಾಡಿ, ಅವರಿಗೆ ವಿಧೇಯರಾಗಿರಿ.</verse>
				<verse number="23">ನೀವು ಏನನ್ನು ಮಾಡಿದರೂ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ.</verse>
				<verse number="24">ಕರ್ತ ಯೇಸುವಿನಿಂದ ಬಾಧ್ಯತೆಯನ್ನು ಬಹುಮಾನವಾಗಿ ಹೊಂದುವಿರೆಂದು ತಿಳಿದಿದ್ದೀರಲ್ಲಾ. ಏಕೆಂದರೆ ನೀವು ಕರ್ತ ಆಗಿರುವ ಕ್ರಿಸ್ತ ಯೇಸುವನ್ನೇ ಸೇವೆಮಾಡುವವರಾಗಿದ್ದೀರಿ.</verse>
				<verse number="25">ಆದರೆ ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕದ್ದನ್ನು ಹೊಂದುವನು ಮತ್ತು ದೇವರಲ್ಲಿ ಪಕ್ಷಪಾತವಿರುವುದಿಲ್ಲ.</verse>
			</chapter>
			<chapter number="4">
				<verse number="1">ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನಿದ್ದಾನೆಂದು ತಿಳಿದು ನಿಮ್ಮ ದಾಸರಿಗೆ ನ್ಯಾಯವಾದದ್ದನ್ನೂ, ಯೋಗ್ಯವಾದದ್ದನ್ನೂ ಕೊಡಿರಿ.</verse>
				<verse number="2">ಎಚ್ಚರವಾಗಿದ್ದು ಕೃತಜ್ಞತೆ ಉಳ್ಳವರಾಗಿ ಪ್ರಾರ್ಥನೆಯಲ್ಲಿ ನಿರತರಾಗಿರಿ.</verse>
				<verse number="3">ನಾವು ಕ್ರಿಸ್ತ ಯೇಸುವಿನ ರಹಸ್ಯವನ್ನು ಮಾತನಾಡುವಂತೆ ದೇವರು ನಮ್ಮ ಸಂದೇಶಕ್ಕೆ ಬಾಗಿಲನ್ನು ತೆರೆಯುವಂತೆ ನಮಗೋಸ್ಕರವೂ ಪ್ರಾರ್ಥಿಸಿರಿ. ಈ ಸೇವೆಗಾಗಿಯೇ ನಾನು ಸೆರೆಯಲ್ಲಿದ್ದೇನಲ್ಲಾ.</verse>
				<verse number="4">ಆದಕಾರಣ ನಾನು ಆ ರಹಸ್ಯವನ್ನು ಮಾಡಬಯಸುವ ರೀತಿಯಲ್ಲಿ ಸ್ಪಷ್ಟವಾಗಿ ಸಾರುವಂತೆಯೂ ಬೇಡಿಕೊಳ್ಳಿರಿ.</verse>
				<verse number="5">ಪ್ರತಿಯೊಂದು ಅವಕಾಶವನ್ನೂ ಸದುಪಯೋಗ ಮಾಡಿಕೊಂಡು ಹೊರಗಿನವರೊಂದಿಗೆ ಜಾಣತನದಿಂದ ನಡೆದುಕೊಳ್ಳಿರಿ.</verse>
				<verse number="6">ನಿಮ್ಮ ಸಂಭಾಷಣೆ ಯಾವಾಗಲೂ ಪೂರ್ಣ ಕೃಪೆಯುಳ್ಳದ್ದೂ, ಉಪ್ಪಿನಿಂದ ಹದವುಳ್ಳದ್ದೂ ಆಗಿರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಹೇಗೆ ಉತ್ತರಕೊಡಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.</verse>
				<verse number="7">ಪ್ರಿಯ ಸಹೋದರನೂ ನಂಬಿಗಸ್ತ ಸೇವಕನೂ ಮತ್ತು ಕರ್ತ ಯೇಸುವಿನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ವಿಷಯವನ್ನೆಲ್ಲಾ ನಿಮಗೆ ತಿಳಿಸುವನು.</verse>
				<verse number="8">ನೀವು ನಮ್ಮ ಪರಿಸ್ಥಿತಿಗಳನ್ನು ತಿಳಿದುಕೊಳ್ಳುವಂತೆಯೂ, ಅವನು ನಿಮ್ಮ ಹೃದಯಗಳನ್ನು ಉತ್ತೇಜಿಸುವಂತೆಯೂ ಅವನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.</verse>
				<verse number="9">ನಿಮ್ಮಲ್ಲಿ ಒಬ್ಬನಾಗಿರುವ ನಂಬಿಗಸ್ತನೂ, ಪ್ರಿಯ ಸಹೋದರನೂ ಆದ ಓನೇಸಿಮನ ಜೊತೆಯಲ್ಲಿ ಅವನನ್ನು ನಾನು ಕಳುಹಿಸಿದ್ದೇನೆ. ಅವರು ಇಲ್ಲಿ ನಡೆಯುವ ವಿಷಯಗಳನ್ನೆಲ್ಲಾ ನಿಮಗೆ ತಿಳಿಸುವರು.</verse>
				<verse number="10">ನನ್ನ ಜೊತೆ ಸೆರೆಯಾಳಾದ ಅರಿಸ್ತಾರ್ಕ, ಬಾರ್ನಬನ ಸಹೋದರಿಯ ಮಗನಾದ ಮಾರ್ಕನು ನಿಮಗೆ ವಂದನೆ ಹೇಳುತ್ತಾರೆ. ಮಾರ್ಕನ ವಿಷಯದಲ್ಲಿ ನೀವು ಮಾರ್ಗದರ್ಶನ ಹೊಂದಿದ್ದೀರಲ್ಲಾ, ಅವನು ನಿಮ್ಮ ಬಳಿಗೆ ಬಂದರೆ ಅವನನ್ನು ಸೇರಿಸಿಕೊಳ್ಳಿರಿ.</verse>
				<verse number="11">ಯೂಸ್ತನೆನಿಸಿಕೊಳ್ಳುವ ಯೇಸುವೂ ನಿಮ್ಮನ್ನು ವಂದಿಸುತ್ತಾನೆ. ದೇವರ ರಾಜ್ಯಕ್ಕಾಗಿ ನನ್ನ ಜೊತೆ ಕೆಲಸದವರಾಗಿದ್ದವರಲ್ಲಿ ಇವರು ಮಾತ್ರವೇ ಯೆಹೂದ್ಯರು. ಇವರು ನನಗೆ ತುಂಬಾ ಆದರಣೆಯಾಗಿದ್ದರು.</verse>
				<verse number="12">ನಿಮ್ಮಲ್ಲಿ ಒಬ್ಬನೂ ಕ್ರಿಸ್ತ ಯೇಸುವಿನ ದಾಸನೂ ಆಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ದೇವರ ಚಿತ್ತದ ಬಗ್ಗೆ ಪರಿಪಕ್ವರಾಗಿ, ಪೂರ್ಣ ನಿಶ್ಚಯವುಳ್ಳವರಾಗಿ ನಿಂತು, ಎಲ್ಲಾ ವಿಷಯಗಳಲ್ಲಿ ನಿಮಗೋಸ್ಕರ ಆಸಕ್ತಿಯಿಂದ ಪ್ರಾರ್ಥನೆಗಳಲ್ಲಿ ಯಾವಾಗಲೂ ಹೋರಾಡುತ್ತಾನೆ.</verse>
				<verse number="13">ನಿಮಗಾಗಿಯೂ ಲವೊದಿಕೀಯ ಹಾಗೂ ಹಿರಿಯಾಪೊಲಿಯ ಜನರಿಗಾಗಿಯೂ ಅವನು ಬಹಳ ಪ್ರಯಾಸಪಡುತ್ತಿದ್ದಾನೆಂದು ಎಪಫ್ರನ ವಿಷಯವಾಗಿ ನಾನು ಸಾಕ್ಷಿ ಹೇಳುತ್ತೇನೆ.</verse>
				<verse number="14">ಪ್ರಿಯ ವೈದ್ಯನಾದ ಲೂಕನು ಮತ್ತು ದೇಮನು ನಿಮಗೆ ವಂದನೆ ಹೇಳುತ್ತಾರೆ.</verse>
				<verse number="15">ಲವೊದಿಕೀಯದಲ್ಲಿರುವ ಸಹೋದರರಿಗೂ ನುಂಫಳಿಗೂ ಆಕೆಯ ಮನೆಯಲ್ಲಿರುವ ಸಭೆಗೂ ವಂದನೆಗಳನ್ನು ಹೇಳಿರಿ.</verse>
				<verse number="16">ಈ ಪತ್ರವನ್ನು ನಿಮ್ಮ ಮಧ್ಯದಲ್ಲಿ ಓದಿದ ತರುವಾಯ ಲವೊದಿಕೀಯದವರ ಸಭೆಯಲ್ಲಿಯೂ ಓದಿ ಹೇಳುವ ವ್ಯವಸ್ಥೆಮಾಡಿರಿ. ಹಾಗೆಯೇ ಲವೊದಿಕೀಯದಿಂದ ಬರುವ ಪತ್ರವನ್ನು ನೀವೂ ಓದಿಕೊಳ್ಳಿರಿ.</verse>
				<verse number="17">ಅರ್ಖಿಪ್ಪನಿಗೆ, “ನೀನು ಕರ್ತ ಯೇಸುವಿನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವುದಕ್ಕೆ ಎಚ್ಚರವಾಗಿರಬೇಕು!” ಎಂದು ಹೇಳಿರಿ.</verse>
				<verse number="18">ಇದು ಪೌಲನಾದ ನಾನೇ ನನ್ನ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.</verse>
			</chapter>
		</book>
		<book number="52">
			<chapter number="1">
				<verse number="1">ತಂದೆ ದೇವರಲ್ಲಿಯೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ, ಪೌಲ, ಸಿಲ್ವಾನ ಹಾಗೂ ತಿಮೊಥೆ ಇವರು ಬರೆಯುವ ಪತ್ರ: ನಿಮಗೆ ಕೃಪೆಯೂ ಶಾಂತಿಯೂ ಆಗಲಿ.</verse>
				<verse number="2">ನಾವು ನಮ್ಮ ಪ್ರಾರ್ಥನೆಗಳಲ್ಲಿ ನಿಮ್ಮನ್ನು ಸ್ಮರಿಸುತ್ತಾ ನಿಮ್ಮೆಲ್ಲರಿಗಾಗಿ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.</verse>
				<verse number="3">ನಿಮ್ಮ ವಿಶ್ವಾಸ ಪ್ರಕಟಿಸುವ ಕ್ರಿಯೆಯನ್ನೂ ಪ್ರೀತಿ ಪ್ರೇರಿತ ಪ್ರಯಾಸವನ್ನೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿರುವ ನಿರೀಕ್ಷೆಯ ಸ್ಮರಣೆಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡಬಿಡದೆ ಜ್ಞಾಪಿಸಿಕೊಳ್ಳುತ್ತೇವೆ.</verse>
				<verse number="4">ದೇವರು ಪ್ರೀತಿಸುವ ಪ್ರಿಯರೇ, ದೇವರು ತಾವಾಗಿಯೇ ನಿಮ್ಮನ್ನು ಆರಿಸಿಕೊಂಡಿದ್ದಾರೆಂದು ನಾವು ಬಲ್ಲೆವು.</verse>
				<verse number="5">ಏಕೆಂದರೆ ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ, ಶಕ್ತಿಯಲ್ಲಿಯೂ ಪವಿತ್ರಾತ್ಮ ದೇವರ ಸನ್ನಿಧಿಯಲ್ಲಿಯೂ ಬಹು ನಿಶ್ಚಯದಲ್ಲಿಯೂ ಬಂತೆಂಬುದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಮಾಡಿದ ಜೀವನ ಎಂಥದ್ದೆಂದು ನೀವೇ ಬಲ್ಲಿರಿ.</verse>
				<verse number="6">ನೀವು ಬಹು ಹಿಂಸೆಯಿಂದಲೂ ಪವಿತ್ರಾತ್ಮ ಪ್ರೇರಿತ ಆನಂದದಿಂದಲೂ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತ ಯೇಸುವನ್ನೂ ಅನುಸರಿಸುವವರಾಗಿದ್ದೀರಿ.</verse>
				<verse number="7">ಹೀಗೆ ಮಕೆದೋನ್ಯ ಹಾಗೂ ಅಖಾಯದ ವಿಶ್ವಾಸಿಗಳೆಲ್ಲರಿಗೂ ನೀವು ಆದರ್ಶರಾದಿರಿ.</verse>
				<verse number="8">ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯ ಹಾಗೂ ಅಖಾಯದಲ್ಲಿ ಘೋಷಿತವಾದದ್ದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಹರಡಿತು. ಆದ್ದರಿಂದ ಇದನ್ನು ಕುರಿತು ನಾವು ಹೇಳಬೇಕಾದ ಅವಶ್ಯ ಏನೂ ಇಲ್ಲ.</verse>
				<verse number="9">ಏಕೆಂದರೆ ನೀವು ನಮ್ಮನ್ನು ಹೇಗೆ ಸ್ವೀಕರಿಸಿದ್ದಿರೆಂಬುದನ್ನೂ ನೀವು ಹೇಗೆ ದೇವರಲ್ಲದವುಗಳನ್ನು ಬಿಟ್ಟುಬಿಟ್ಟು ದೇವರ ಕಡೆಗೆ ತಿರುಗಿಕೊಂಡು ಜೀವವುಳ್ಳ ಸತ್ಯದೇವರನ್ನು ಸೇವಿಸುವವರಾದಿರೆಂಬುದನ್ನೂ ಅವರು ತಾವೇ ವಿವರಿಸುತ್ತಾರೆ.</verse>
				<verse number="10">ಇದಲ್ಲದೆ, ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ ತಮ್ಮ ಪುತ್ರರಾಗಿರುವ ಯೇಸು ಮುಂದೆ ಬರುವ ಕೋಪದಿಂದ ನಮ್ಮನ್ನು ಬಿಡಿಸುವವರೂ ಆಗಿದ್ದಾರೆ. ಈ ಯೇಸುವನ್ನೇ ಪರಲೋಕದಿಂದ ಬರುವುದನ್ನು ನೀವು ಎದುರು ನೋಡುತ್ತಿದ್ದೀರಿ ಎಂಬುದನ್ನೂ ಅವರು ನಮಗೆ ವಿವರಿಸಿದರು.</verse>
			</chapter>
			<chapter number="2">
				<verse number="1">ಪ್ರಿಯರೇ, ನಾವು ನಿಮ್ಮ ಬಳಿಗೆ ಬಂದದ್ದು ವ್ಯರ್ಥವಾಗಲಿಲ್ಲವೆಂಬುದನ್ನು ನೀವು ತಿಳಿದಿದ್ದೀರಿ.</verse>
				<verse number="2">ಫಿಲಿಪ್ಪಿ ಪಟ್ಟಣದಲ್ಲಿ ಮುಂಚೆ ನಮಗೆ ಹಿಂಸೆ ಮತ್ತು ಅವಮಾನವು ಸಂಭವಿಸಿದ್ದನ್ನು ನೀವು ಬಲ್ಲಿರಿ. ಹಾಗಿದ್ದರೂ ನಾವು ನಮ್ಮ ದೇವರ ಸಹಾಯದಿಂದ ಧೈರ್ಯಗೊಂಡು ಬಹು ವಿರೋಧದ ನಡುವೆ ನಿಮಗೆ ಸುವಾರ್ತೆಯನ್ನು ತಿಳಿಸಿದೆವು.</verse>
				<verse number="3">ಏಕೆಂದರೆ ನಮ್ಮ ಬೋಧನೆಯು ದುರುದ್ದೇಶದಿಂದಲೂ ಇಲ್ಲವೆ ವಂಚನೆಗಳಿಂದಲೂ ತಪ್ಪುಗಳಿಂದಲೂ ಕೂಡಿದ್ದಲ್ಲ.</verse>
				<verse number="4">ದೇವರು ನಮ್ಮನ್ನು ಅನುಮೋದಿಸಿ ನಮ್ಮ ವಶಕ್ಕೆ ಸುವಾರ್ತೆಯನ್ನು ಒಪ್ಪಿಸಿಕೊಟ್ಟಿದ್ದಾರೆ. ಹಾಗಿರುವುದರಿಂದ, ನಾವು ಮನುಷ್ಯರನ್ನು ಮೆಚ್ಚಿಸದೆ ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತೇವೆ.</verse>
				<verse number="5">ನಾವು ಎಂದಿಗೂ ನಿಮ್ಮನ್ನು ಹೊಗಳಿ ಮಾತನಾಡಲಿಲ್ಲ, ಕೌಶಲ್ಯವನ್ನು ಪ್ರಯೋಗಿಸಿ ಹಣದಾಸೆಯನ್ನು ಮರೆಮಾಡುವವರು ಆಗಿರಲಿಲ್ಲ ಎಂಬುದನ್ನು ನೀವು ತಿಳಿದಿರುವಿರಿ. ಇದಕ್ಕೆ ದೇವರೇ ಸಾಕ್ಷಿ.</verse>
				<verse number="6">ಕ್ರಿಸ್ತ ಯೇಸುವಿನ ಅಪೊಸ್ತಲರಾದ ನಾವು ನಿಮ್ಮ ಮೇಲೆ ಭಾರವನ್ನು ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಗೌರವವನ್ನು ನಿಮ್ಮಿಂದಾಗಲೀ, ಇತರರಿಂದಾಗಲೀ, ಹುಡುಕುವವರಾಗಿರಲಿಲ್ಲ.</verse>
				<verse number="7">ಅದರ ಬದಲಾಗಿ, ನಾವು ನಿಮ್ಮ ನಡುವೆ ಶಿಶುಗಳಂತೆ ಇದ್ದೆವು. ತಾಯಿಯು ತನ್ನ ಮಕ್ಕಳನ್ನು ಪೋಷಿಸುವಂತೆ,</verse>
				<verse number="8">ನಿಮ್ಮನ್ನು ಪೋಷಿಸಿದೆವು. ಏಕೆಂದರೆ ನಾವು ನಿಮ್ಮನ್ನು ಬಹಳವಾಗಿ ಪ್ರೀತಿಸಿದ್ದರಿಂದ, ದೇವರ ಸುವಾರ್ತೆಯನ್ನು ಸಾರುವುದಕ್ಕೆ ಮಾತ್ರವಲ್ಲದೆ ನಿಮಗೋಸ್ಕರ ನಾವು ನಮ್ಮ ಪ್ರಾಣವನ್ನೇ ಕೊಡುವುದಕ್ಕೂ ಇಷ್ಟವುಳ್ಳವರಾಗಿದ್ದೆವು.</verse>
				<verse number="9">ಪ್ರಿಯರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕಬಾರದೆಂದು ಹಗಲಿರುಳು ದುಡಿದು ಕಷ್ಟ ಪ್ರಯಾಸದಿಂದ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವೆಂಬುದು ನಿಮ್ಮ ನೆನಪಿನಲ್ಲಿರುವುದಷ್ಟೆ.</verse>
				<verse number="10">ನಂಬುವವರಾದ ನಿಮ್ಮೊಂದಿಗೆ ನಾವು ಎಷ್ಟೋ ಪವಿತ್ರರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿ.</verse>
				<verse number="11">ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನನ್ನು ನಡೆಸಿದೆವು.</verse>
				<verse number="12">ನಿಮಗೆ ಬುದ್ಧಿ ಹೇಳುತ್ತಾ ಸಂತೈಸುತ್ತಾ ಬಂದೆವು. ಹೀಗೆ ದೇವರ ಹಾಗೂ ಅವರ ರಾಜ್ಯದ ಮಹಿಮೆಗಾಗಿ ಕರೆದಾತನಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಸಾಕ್ಷಿ ಹೇಳಿದೆವೆಂಬುದು ನಿಮಗೆ ತಿಳಿದಿದೆ.</verse>
				<verse number="13">ಈ ಕಾರಣಕ್ಕಾಗಿಯೇ ನಂಬುವವರಾದ ನಿಮ್ಮಲ್ಲಿ ಕಾರ್ಯಸಾಧಿಸುವ ದೇವರ ವಾಕ್ಯವನ್ನು ನಮ್ಮಿಂದ ನೀವು ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ, ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.</verse>
				<verse number="14">ಪ್ರಿಯರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನೇ ನೀವೂ ಸಹ ನಿಮ್ಮ ಸ್ವದೇಶಿಯರಿಂದ ಅನುಭವಿಸಿದಿರಿ.</verse>
				<verse number="15">ಆ ಯೆಹೂದ್ಯರು ನಮಗೆ ಕರ್ತ ಆಗಿರುವ ಯೇಸುವನ್ನು ಮತ್ತು ಪ್ರವಾದಿಗಳನ್ನು ಕೊಂದರು. ನಮ್ಮನ್ನೂ ಓಡಿಸಿಬಿಟ್ಟರು. ಅವರು ದೇವರನ್ನು ಮೆಚ್ಚಿಸದೆ ಜನರೆಲ್ಲರಿಗೂ ವಿರೋಧಿಗಳಾಗಿದ್ದಾರೆ.</verse>
				<verse number="16">ಯೆಹೂದ್ಯರಲ್ಲದವರಿಗೆ ರಕ್ಷಣೆಯಾಗುವಂತೆ ಮಾತನಾಡುವ ನಮಗೆ ಅವರು ಅಡ್ಡಿ ಮಾಡುತ್ತಾರೆ. ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಹೆಚ್ಚೆಚ್ಚಾಗಿ ಕೂಡಿಸಿಕೊಳ್ಳುತ್ತಾ ಹೋಗುತ್ತಾರೆ. ಕೊನೆಗೆ ಕೋಪಾಗ್ನಿಯೂ ಅವರ ಮೇಲೆ ಬರಲಿದೆ.</verse>
				<verse number="17">ಪ್ರಿಯರೇ, ನಾವು ದೈಹಿಕವಾಗಿ ನಿಮ್ಮನ್ನು ಬಿಟ್ಟು ಸ್ವಲ್ಪಕಾಲ ಅಗಲಿದರೂ ಹೃದಯದಲ್ಲಿ ಅಗಲದೆ, ನಿಮ್ಮ ಮುಖವನ್ನು ಕಾಣಲು ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು.</verse>
				<verse number="18">ಆದ್ದರಿಂದ ನಿಮ್ಮ ಬಳಿಗೆ ಬರುವುದಕ್ಕೆ ನಮಗೆ ಮನಸ್ಸಿತ್ತು. ಪೌಲನಾದ ನಾನಂತೂ ಮತ್ತೆ ಮತ್ತೆ ಬರಲು ಬಯಸಿದೆನು. ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು.</verse>
				<verse number="19">ನಮಗೆ ಕರ್ತ ಆಗಿರುವ ಯೇಸು ಬರುವಾಗ ಅವರ ಮುಂದೆ ನಮ್ಮ ನಿರೀಕ್ಷೆಯೂ ಆನಂದವೂ ಅಭಿಮಾನದ ಕಿರೀಟವೂ ಯಾರು? ನೀವೇ ಅಲ್ಲವೇ?</verse>
				<verse number="20">ನೀವೇ ನಮ್ಮ ಮಹಿಮೆಯೂ ಆನಂದವೂ ಆಗಿದ್ದೀರಿ.</verse>
			</chapter>
			<chapter number="3">
				<verse number="1">ಆದ್ದರಿಂದ ನಿಮ್ಮ ಅಗಲಿಕೆಯನ್ನು ಸಹಿಸಲಾಗದೆ, ನಾವು ಅಥೇನೆಯಲ್ಲಿ ಒಬ್ಬಂಟಿಗರಾಗಿಯೇ ಇರುವುದು ಒಳ್ಳೆಯದೆಂದು ಯೋಚಿಸಿದೆವು.</verse>
				<verse number="2">ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ನಿಮ್ಮನ್ನು ಉತ್ತೇಜಿಸುವುದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಯೇಸುಕ್ರಿಸ್ತರ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.</verse>
				<verse number="3">ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ. ಏಕೆಂದರೆ ಇವುಗಳಿಗಾಗಿಯೇ ನಾವು ನೇಮಕವಾಗಿದ್ದೇವೆ ಎಂದು ನೀವೇ ಬಲ್ಲಿರಿ.</verse>
				<verse number="4">ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ. ಹಾಗೆ ಆಯಿತೆಂದು ನೀವೂ ಚೆನ್ನಾಗಿ ಬಲ್ಲಿರಿ.</verse>
				<verse number="5">ಈ ಕಾರಣದಿಂದ, ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಶೋಧಿಸುವನೋ ಎಂಬ ಭಯದ ದೆಸೆಯಿಂದ, ನಾನು ಸಹ ಸಹಿಸಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳಿದುಕೊಳ್ಳುವುದಕ್ಕೆ ತಿಮೊಥೆಯನನ್ನು ಕಳುಹಿಸಿದೆನು.</verse>
				<verse number="6">ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಹಾಗೂ ಪ್ರೀತಿಯ ವಿಷಯವಾಗಿ ಒಳ್ಳೆಯ ವರ್ತಮಾನವನ್ನು ತಂದಿದ್ದಾನೆ. ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ನೆನಪಿಸಿಕೊಂಡು, ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವುದಕ್ಕೆ ಹಾರೈಸುತ್ತೀರೆಂಬುದನ್ನು ತಿಳಿಸಿದ್ದಾನೆ.</verse>
				<verse number="7">ಈ ಕಾರಣದಿಂದ ಪ್ರಿಯರೇ, ನಮ್ಮ ಎಲ್ಲಾ ಇಕ್ಕಟ್ಟು ಹಾಗೂ ಹಿಂಸೆಗಳಲ್ಲಿಯೂ ನಿಮ್ಮ ನಂಬಿಕೆಯ ಮೂಲಕ ನಮಗೆ ಆದರಣೆಯಾಯಿತು.</verse>
				<verse number="8">ಏಕೆಂದರೆ ನೀವು ಕರ್ತ ಯೇಸುವಿನಲ್ಲಿ ದೃಢವಾಗಿ ನಿಂತಿರುವುದರಿಂದಲೇ ಈಗ ನಾವು ನಿಜವಾಗಿಯೂ ಜೀವಿಸುತ್ತಿದ್ದೇವೆ.</verse>
				<verse number="9">ನಿಮ್ಮ ನಿಮಿತ್ತ ನಮ್ಮ ದೇವರ ಮುಂದೆ ನಮಗಿರುವ ಎಲ್ಲಾ ಆನಂದಕ್ಕೆ ಬದಲಾಗಿ ದೇವರಿಗೆ ಹೇಗೆ ಸಾಕಷ್ಟು ಕೃತಜ್ಞತೆಯನ್ನು ಸಲ್ಲಿಸಬಹುದು?</verse>
				<verse number="10">ನಿಮ್ಮ ಮುಖವನ್ನು ನೋಡುವುದಕ್ಕಾಗಿಯೂ ನಿಮ್ಮ ನಂಬಿಕೆಯಲ್ಲಿರುವ ಕೊರತೆಯನ್ನು ನಿವಾರಿಸುವುದಕ್ಕೂ ನಾವು ಹಗಲಿರುಳು ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದೇವೆ.</verse>
				<verse number="11">ನಮ್ಮ ತಂದೆಯಾದ ದೇವರೂ ನಮಗೆ ಕರ್ತ ಆಗಿರುವ ಯೇಸುವೂ ನಾವು ನಿಮ್ಮಲ್ಲಿಗೆ ಬರುವಂತೆ ಮಾರ್ಗವನ್ನು ಸುಗಮಗೊಳಿಸಲಿ.</verse>
				<verse number="12">ನಮ್ಮ ಪ್ರೀತಿಯು ನಿಮ್ಮ ಕಡೆಗೆ ಸಮೃದ್ಧಿಯಾಗಿರುವಂತೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ತುಂಬಿರುವಂತೆ ಕರ್ತ ಯೇಸು ನಿಮಗೆ ಅನುಗ್ರಹಿಸಲಿ.</verse>
				<verse number="13">ನಮಗೆ ಕರ್ತ ಆಗಿರುವ ಯೇಸುವು ತಮ್ಮ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ, ನೀವು ತಂದೆ ದೇವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ಬಲಪಡಿಸಲಿ!</verse>
			</chapter>
			<chapter number="4">
				<verse number="1">ಪ್ರಿಯರೇ, ನೀವು ಹೇಗೆ ನಡೆದುಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿದಂತೆಯೇ ಜೀವಿಸುತಿರುವಿರಿ. ಇದರಲ್ಲಿ ನೀವು ಹೆಚ್ಚೆಚ್ಚಾಗಿ ಮಾಡಬೇಕೆಂದು ನಾವು ಕಡೆಯದಾಗಿ ನಮಗೆ ಕರ್ತ ಆಗಿರುವ ಯೇಸುವಿನಲ್ಲಿ ನಿಮ್ಮನ್ನು ಪ್ರಬೋಧಿಸುತ್ತೇವೆ ಮತ್ತು ಉತ್ತೇಜಿಸುತ್ತೇವೆ.</verse>
				<verse number="2">ನಮಗೆ ಕರ್ತ ಆಗಿರುವ ಯೇಸುವಿನ ಅಧಿಕಾರದ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದವರಾಗಿದ್ದೀರಿ.</verse>
				<verse number="3">ನೀವು ಪವಿತ್ರರಾಗಿ ಇರಬೇಕೆಂಬುದೇ ದೇವರ ಚಿತ್ತವಾಗಿದೆ. ಆದ್ದರಿಂದ ನೀವು ಕಾಮಾತಿರೇಕಕ್ಕೆ ದೂರವಾಗಿರಬೇಕು.</verse>
				<verse number="4">ನಿಮ್ಮಲ್ಲಿ ಪ್ರತಿಯೊಬ್ಬನೂ ಪವಿತ್ರತೆಯಿಂದಲೂ ಘನತೆಯಿಂದಲೂ ತನ್ನ ಸ್ವಂತ ದೇಹವನ್ನು ಕಾಪಾಡಿಕೊಳ್ಳಲು ತಿಳಿಯಬೇಕು.</verse>
				<verse number="5">ನೀವು ದೇವರನ್ನರಿಯದ ಯೆಹೂದ್ಯರಲ್ಲದವರಂತೆ ಕಾಮಾಭಿಲಾಷೆಗೆ ಒಳಪಡಬಾರದು.</verse>
				<verse number="6">ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತಮ್ಮ ಸಹೋದರ ಸಹೋದರಿಯನ್ನು ವಂಚಿಸದಿರಲಿ. ಏಕೆಂದರೆ ನಾವು ಮೊದಲು ತಿಳಿಸಿ ನಿಮಗೆ ಗಂಭೀರವಾಗಿ ಎಚ್ಚರಿಸಿದಂತೆ ಈ ಪಾಪಗಳ ವಿಷಯದಲ್ಲಿ ಕರ್ತ ಯೇಸುವು ಮುಯ್ಯಿಗೆ ಮುಯ್ಯಿ ತೀರಿಸುವವರಾಗಿದ್ದಾರೆ.</verse>
				<verse number="7">ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಪವಿತ್ರ ಜೀವನವನ್ನು ಜೀವಿಸಲು ಕರೆದಿದ್ದಾರೆ.</verse>
				<verse number="8">ಆದ್ದರಿಂದ, ಈ ಆಜ್ಞೆಗಳನ್ನು ತಿರಸ್ಕರಿಸುವವನು ಮನುಷ್ಯನನ್ನಲ್ಲ ದೇವರನ್ನು ಅಂದರೆ, ತಮ್ಮ ಪವಿತ್ರಾತ್ಮರನ್ನು ನಮಗೆ ಕೊಡುವ ದೇವರನ್ನೇ ತಿರಸ್ಕರಿಸುತ್ತಾನೆ.</verse>
				<verse number="9">ಸಹೋದರ ಪ್ರೀತಿಯ ವಿಷಯದಲ್ಲಿ ನಿಮಗೆ ಬರೆಯುವುದು ಅವಶ್ಯವಿಲ್ಲ. ಒಬ್ಬರನ್ನೊಬ್ಬರು ಪ್ರೀತಿಸಬೇಕೆಂದು ನೀವು ದೇವರಿಂದಲೇ ಉಪದೇಶ ಹೊಂದಿದ್ದೀರಿ.</verse>
				<verse number="10">ಸಮಸ್ತ ಮಕೆದೋನ್ಯದಲ್ಲಿರುವ ಸಹೋದರರನ್ನೆಲ್ಲಾ ನೀವು ಪ್ರೀತಿಸುತ್ತಿರುವುದು ನಿಜವೆ. ಆದರೂ ಪ್ರಿಯರೇ, ನೀವು ಪ್ರೀತಿಯಲ್ಲಿ ಇನ್ನೂ ಸಮೃದ್ಧಿಯಾಗಬೇಕೆಂದು ನಾವು ನಿಮ್ಮನ್ನು ಉತ್ತೇಜಿಸುತ್ತೇವೆ.</verse>
				<verse number="11">ಇದಲ್ಲದೆ ನಾವು ನಿಮಗೆ ಹೇಳಿದ ಪ್ರಕಾರ ಪ್ರಶಾಂತ ಜೀವನವೇ ನಿಮ್ಮ ಗುರಿಯಾಗಿರಲಿ: ನೀವು ಸ್ವಂತ ಕಾರ್ಯಗಳನ್ನೇ ನಡೆಸಿಕೊಂಡು, ನಿಮ್ಮ ಕೈಯಾರೆ ಕೆಲಸ ಮಾಡುವವರಾಗಿರಿ.</verse>
				<verse number="12">ಹೀಗೆ ನಿಮ್ಮ ಅನುದಿನದ ಜೀವನವು ಹೊರಗಿನವರ ಮುಂದೆ ಯೋಗ್ಯವಾಗಿರುವುದು ಮತ್ತು ನೀವು ಯಾರ ಮೇಲೆಯೂ ಆತುಕೊಳ್ಳದೆ ಬಾಳುವಿರಿ.</verse>
				<verse number="13">ಪ್ರಿಯರೇ, ನೀವು ನಿರೀಕ್ಷೆಯಿಲ್ಲದೆ ಗೋಳಾಡುವವರಂತೆ ಮರಣ ಹೊಂದಿದ ವಿಶ್ವಾಸಿಗಳ ಬಗ್ಗೆ ಅಜ್ಞಾನಿಗಳಾಗಿರಬಾರದೆಂದು ನಾವು ಅಪೇಕ್ಷಿಸುತ್ತೇವೆ.</verse>
				<verse number="14">ಏಕೆಂದರೆ ಯೇಸು ಸತ್ತು ಪುನಃ ಜೀವಂತವಾಗಿ ಎದ್ದರೆಂದು ನಾವು ನಂಬಿದರೆ, ಅದರಂತೆ ಯೇಸುವಿನಲ್ಲಿ ನಿದ್ರೆಹೋದವರನ್ನು ಸಹ ದೇವರು ಅವರೊಡನೆ ಕರೆದುಕೊಂಡು ಬರುವರು.</verse>
				<verse number="15">ಕರ್ತ ಯೇಸುವಿನ ಪುನರಾಗಮನದವರೆಗೆ ಇನ್ನೂ ಜೀವದಿಂದ ಉಳಿದಿರುವ ನಾವು ಮರಣಹೊಂದಿದವರಿಗಿಂತ ಮುಂದಾಗಿ ಪುನರುತ್ಥಾನವಾಗುವುದಿಲ್ಲ ಎಂದು, ನಾವು ಕರ್ತ ಯೇಸುವಿನ ವಾಕ್ಯದ ಆಧಾರದಿಂದ ನಿಮಗೆ ಹೇಳುತ್ತಿದ್ದೇವೆ.</verse>
				<verse number="16">ಏಕೆಂದರೆ ಕರ್ತ ಯೇಸು ತಾವೇ ಆಜ್ಞಾಘೋಷದೊಡನೆಯೂ ಪ್ರಧಾನ ದೇವದೂತನ ಧ್ವನಿಯೊಡನೆಯೂ ದೇವರ ತುತೂರಿಯೊಡನೆಯೂ ಪರಲೋಕದಿಂದ ಇಳಿದು ಬರುವರು. ಆಗ ಕ್ರಿಸ್ತ ಯೇಸುವಿನಲ್ಲಿ ಸತ್ತವರು ಮೊದಲು ಎದ್ದು ಬರುವರು.</verse>
				<verse number="17">ಆಮೇಲೆ, ಜೀವದಿಂದ ಉಳಿದಿರುವ ನಾವು ಅವರೊಂದಿಗೆ ಅಂತರಿಕ್ಷದಲ್ಲಿ ಕರ್ತ ಯೇಸುವನ್ನು ಎದುರುಗೊಳ್ಳುವುದಕ್ಕಾಗಿ ಮೇಘಗಳಲ್ಲಿ ಒಯ್ಯಲಾಗುವೆವು. ಹೀಗೆ ನಾವು ಸದಾಕಾಲವೂ ಕರ್ತ ಯೇಸುವಿನ ಜೊತೆಯಲ್ಲಿಯೇ ಇರುವೆವು.</verse>
				<verse number="18">ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.</verse>
			</chapter>
			<chapter number="5">
				<verse number="1">ಪ್ರಿಯರೇ, ಈ ಕಾಲಸಮಯಗಳನ್ನು ಕುರಿತು ನಿಮಗೆ ಬರೆಯುವುದು ಅವಶ್ಯವಿಲ್ಲ.</verse>
				<verse number="2">ರಾತ್ರಿಯಲ್ಲಿ ಕಳ್ಳನು ಬರುವಂತೆ ಕರ್ತ ಯೇಸುವಿನ ದಿನವು ಬರುವುದೆಂದು ನೀವೇ ಚೆನ್ನಾಗಿ ಬಲ್ಲಿರಿ.</verse>
				<verse number="3">ಆದರೆ, “ಸಮಾಧಾನ, ಸುರಕ್ಷಿತ,” ಎಂದು ಜನರು ಹೇಳುತ್ತಿರುವಾಗಲೇ, ಅವರ ಮೇಲೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಬರುವಂತೆ ಫಕ್ಕನೆ ಬರುವುದು. ಅವರು ಹೇಗೂ ತಪ್ಪಿಸಿಕೊಳ್ಳಲಾರರು.</verse>
				<verse number="4">ಆದರೆ ಪ್ರಿಯರೇ, ಆ ದಿನವು ಕಳ್ಳನಂತೆ ನಿಮ್ಮನ್ನು ಆಶ್ಚರ್ಯಪಡಿಸುವುದಕ್ಕೆ ನೀವು ಕತ್ತಲೆಯಲ್ಲಿರುವವರಲ್ಲ.</verse>
				<verse number="5">ನೀವೆಲ್ಲರೂ ಬೆಳಕಿನ ಮಕ್ಕಳೂ ಹಗಲಿನ ಮಕ್ಕಳೂ ಆಗಿದ್ದೀರಿ. ನಾವು ರಾತ್ರಿಯವರೂ ಅಲ್ಲ, ಕತ್ತಲೆಯವರೂ ಅಲ್ಲ.</verse>
				<verse number="6">ಆದಕಾರಣ ನಾವು ಇತರರಂತೆ ನಿದ್ರೆ ಮಾಡದೆ ಎಚ್ಚರವಾಗಿದ್ದು ಸ್ವಸ್ಥಚಿತ್ತರಾಗಿರೋಣ.</verse>
				<verse number="7">ನಿದ್ರೆ ಮಾಡುವವರು ರಾತ್ರಿಯಲ್ಲಿ ನಿದ್ರೆ ಮಾಡುತ್ತಾರೆ. ಅಮಲೇರುವವರು ರಾತ್ರಿಯಲ್ಲಿ ಅಮಲೇರುತ್ತಾರೆ.</verse>
				<verse number="8">ನಾವಾದರೋ ಹಗಲಿಗೆ ಸೇರಿದವರಾಗಿ ಇರುವುದರಿಂದ ನಂಬಿಕೆ ಹಾಗೂ ಪ್ರೀತಿಯನ್ನು ಕವಚವನ್ನಾಗಿಯೂ ರಕ್ಷಣೆಯ ನಿರೀಕ್ಷೆಯನ್ನು ಶಿರಸ್ತ್ರಾಣವನ್ನಾಗಿಯೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.</verse>
				<verse number="9">ಏಕೆಂದರೆ ದೇವರು ನಮ್ಮನ್ನು ಕೋಪಾಗ್ನಿಗೆ ನೇಮಿಸದೆ ನಾವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿ ರಕ್ಷಣೆಯನ್ನು ಹೊಂದಬೇಕೆಂದೇ ನೇಮಿಸಿದರು.</verse>
				<verse number="10">ನಾವು ಎಚ್ಚರವಾಗಿದ್ದರೂ ನಿದ್ರೆಯಲ್ಲಿದ್ದರೂ ತಮ್ಮ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಅವರು ನಮಗಾಗಿ ಸತ್ತರು.</verse>
				<verse number="11">ಆದ್ದರಿಂದ ನೀವು ಈಗ ಮಾಡುತ್ತಿರುವಂತೆಯೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ. ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಗೊಳಿಸಿರಿ.</verse>
				<verse number="12">ಪ್ರಿಯರೇ, ಯಾರು ನಿಮ್ಮ ನಡುವೆ ಪ್ರಯಾಸಪಟ್ಟು ಕರ್ತ ಯೇಸುವಿನಲ್ಲಿ ನಿಮ್ಮನ್ನು ಪರಾಮರಿಸುವವರಾಗಿದ್ದು ನಿಮಗೆ ಬುದ್ಧಿ ಹೇಳುತ್ತಾರೋ ಅವರನ್ನು ಗೌರವಿಸಿರಿ.</verse>
				<verse number="13">ಅವರ ಕೆಲಸದ ನಿಮಿತ್ತ ಅವರನ್ನು ಪ್ರೀತಿಯಿಂದ ಅತ್ಯಧಿಕವಾಗಿ ಸನ್ಮಾನ ಮಾಡಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇವೆ. ನಿಮ್ಮನಿಮ್ಮೊಳಗೆ ಸಮಾಧಾನದಿಂದಿರಿ.</verse>
				<verse number="14">ಪ್ರಿಯರೇ, ಶಿಸ್ತು ಇಲ್ಲದವರನ್ನು ಎಚ್ಚರಿಸಿರಿ. ಮನಗುಂದಿದವರನ್ನು ಆದರಿಸಿರಿ. ಬಲಹೀನರಿಗೆ ಆಧಾರವಾಗಿರಿ. ಎಲ್ಲರೊಂದಿಗೂ ತಾಳ್ಮೆಯುಳ್ಳವರಾಗಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.</verse>
				<verse number="15">ಯಾರೂ ಅಪಕಾರಕ್ಕೆ ಅಪಕಾರ ಮಾಡದಂತೆ ನೋಡಿಕೊಳ್ಳಿರಿ. ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಳ್ಳುವುದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.</verse>
				<verse number="16">ಯಾವಾಗಲೂ ಆನಂದಿಸಿರಿ.</verse>
				<verse number="17">ಎಡೆಬಿಡದೆ ಪ್ರಾರ್ಥಿಸಿರಿ.</verse>
				<verse number="18">ಎಲ್ಲವುಗಳಿಗಾಗಿ ಕೃತಜ್ಞತೆ ಸಲ್ಲಿಸಿರಿ. ಏಕೆಂದರೆ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಚಿತ್ತವಾಗಿದೆ.</verse>
				<verse number="19">ಪವಿತ್ರಾತ್ಮ ದೇವರ ಸನ್ನಿಧಿಯನ್ನು ನಂದಿಸಬೇಡಿರಿ.</verse>
				<verse number="20">ಪ್ರವಾದನೆಗಳನ್ನು ಹೀನೈಸಬೇಡಿರಿ.</verse>
				<verse number="21">ಎಲ್ಲವನ್ನು ಪರಿಶೋಧಿಸಿ ಒಳ್ಳೆಯದನ್ನೇ ಬಿಗಿಯಾಗಿ ಹಿಡಿದುಕೊಳ್ಳಿರಿ.</verse>
				<verse number="22">ಸಕಲ ವಿಧವಾದ ಕೆಟ್ಟತನಗಳಿಗೆ ದೂರವಾಗಿರಿ.</verse>
				<verse number="23">ಸಮಾಧಾನದ ದೇವರು ತಾವಾಗಿಯೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ. ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಪುನರಾಗಮನದಲ್ಲಿ ನಿಮ್ಮ ಆತ್ಮ, ಪ್ರಾಣ, ಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಸುರಕ್ಷಿತವಾಗಿರಲಿ.</verse>
				<verse number="24">ನಿಮ್ಮನ್ನು ಕರೆಯುವ ದೇವರು ನಂಬಿಗಸ್ತರು, ಅವರೇ ಅದನ್ನು ಸಾಧಿಸುವವರೂ ಆಗಿದ್ದಾರೆ.</verse>
				<verse number="25">ಪ್ರಿಯರೇ, ನಮಗಾಗಿ ಪ್ರಾರ್ಥಿಸಿರಿ.</verse>
				<verse number="26">ಪವಿತ್ರವಾದ ಮುದ್ದಿಟ್ಟು ದೇವಜನರೆಲ್ಲರನ್ನೂ ವಂದಿಸಿರಿ.</verse>
				<verse number="27">ಈ ಪತ್ರವನ್ನು ಸಹೋದರ ಸಹೋದರಿಯರೆಲ್ಲರಿಗೂ ಓದಿ ಹೇಳಬೇಕೆಂದು ನಿಮಗೆ ಕರ್ತ ಯೇಸುವಿನ ಹೆಸರಿನಲ್ಲಿ ಆಜ್ಞಾಪಿಸುತ್ತೇನೆ.</verse>
				<verse number="28">ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮೊಂದಿಗಿರಲಿ.</verse>
			</chapter>
		</book>
		<book number="53">
			<chapter number="1">
				<verse number="1">ನಮ್ಮ ತಂದೆ ದೇವರಲ್ಲಿಯೂ, ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ, ತಿಮೊಥೆಯರು ಬರೆಯುವುದು:</verse>
				<verse number="2">ನಮ್ಮ ತಂದೆ ದೇವರಿಂದಲೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.</verse>
				<verse number="3">ಪ್ರಿಯರೇ, ನಾವು ಯಾವಾಗಲೂ ನಿಮಗಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ. ಹಾಗೆ ಮಾಡುವುದು ಯೋಗ್ಯ. ಏಕೆಂದರೆ ನಿಮ್ಮ ವಿಶ್ವಾಸವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುತ್ತಾ ಇದೆ ಮತ್ತು ಪರಸ್ಪರ ನಿಮ್ಮೆಲ್ಲರಲ್ಲಿ ಪ್ರೀತಿಯೂ ಹೆಚ್ಚುತ್ತಿದೆ.</verse>
				<verse number="4">ಹೀಗಿರುವುದರಿಂದ, ನೀವು ಸಹಿಸುತ್ತಿರುವ ನಿಮ್ಮ ಎಲ್ಲಾ ಹಿಂಸೆಗಳಲ್ಲಿಯೂ ಸಂಕಟಗಳಲ್ಲಿಯೂ ನಿಮಗೆ ತೋರಿ ಬಂದ ನಿಮ್ಮ ತಾಳ್ಮೆ, ನಂಬಿಕೆಗಳನ್ನು ನೆನೆಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಮ್ಮೆಪಡುತ್ತೇವೆ.</verse>
				<verse number="5">ನೀವು ಯಾವ ದೇವರ ರಾಜ್ಯಕ್ಕಾಗಿ ಕಷ್ಟವನ್ನು ಅನುಭವಿಸುತ್ತಿರುವಿರೋ, ಆ ರಾಜ್ಯಕ್ಕಾಗಿ ನೀವು ಯೋಗ್ಯರೆಂದು ಎಣಿಕೆಯಾಗಲು ಇದು ದೇವರ ನೀತಿಯುಳ್ಳ ನ್ಯಾಯತೀರ್ಪಿಗೆ ಸ್ಪಷ್ಟವಾದ ನಿದರ್ಶನವಾಗಿದೆ.</verse>
				<verse number="6">ನಿಮ್ಮನ್ನು ಸಂಕಟ ಪಡಿಸುವವರಿಗೆ ದೇವರು ಪ್ರತಿಯಾಗಿ ಸಂಕಟವನ್ನೂ ಮತ್ತು</verse>
				<verse number="7">ಸಂಕಟ ಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರಿಗೆ ನ್ಯಾಯವಾಗಿದೆ. ನಮಗೆ ಕರ್ತ ಆಗಿರುವ ಯೇಸು ತಮ್ಮ ಶಕ್ತಿಯುತವಾದ ದೂತರೊಂದಿಗೆ ಪರಲೋಕದಿಂದ ಪ್ರಜ್ವಲಿಸುವ ಜ್ವಾಲೆಯಲ್ಲಿ ಪ್ರತ್ಯಕ್ಷರಾಗುವಾಗ ಇದಾಗುವುದು.</verse>
				<verse number="8">ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು.</verse>
				<verse number="9">ಅಂಥವರು ಕರ್ತ ಯೇಸುವಿನ ಸನ್ನಿಧಿಯಿಂದಲೂ ಅವರ ಮಹಿಮೆಯ ಬಲದಿಂದಲೂ ಬಹಿಷ್ಕೃತರಾಗಿ ನಿತ್ಯನಾಶದ ಶಿಕ್ಷೆಯನ್ನು ಅನುಭವಿಸುವರು.</verse>
				<verse number="10">ಆ ದಿನದಲ್ಲಿ ಕರ್ತ ಯೇಸು ತಮ್ಮ ಪರಿಶುದ್ಧ ಜನರಲ್ಲಿ ಮಹಿಮೆ ಹೊಂದುವವರಾಗಿಯೂ ನಂಬುವವರೆಲ್ಲರನ್ನು ಆಶ್ಚರ್ಯಪಡಿಸುವವರಾಗಿಯೂ ಬರುವರು. ನಮ್ಮ ಸಾಕ್ಷಿಯನ್ನು ನಂಬಿದ್ದರಿಂದ ನಿಮಗೂ ಇವು ಸಂಭವಿಸುವುವು.</verse>
				<verse number="11">ನಮ್ಮ ದೇವರು ನೀಡಿರುವ ಕರೆಯುವಿಕೆಗೆ ನಿಮ್ಮನ್ನು ಯೋಗ್ಯರೆಂದು ಎಣಿಸಿ, ಒಳಿತನ್ನು ಮಾಡಲು ನಿಮ್ಮ ಎಲ್ಲಾ ಇಷ್ಟಾರ್ಥವನ್ನೂ ವಿಶ್ವಾಸದಿಂದ ಆಗಿರುವ ನಿಮ್ಮ ಎಲ್ಲಾ ಕಾರ್ಯಗಳನ್ನೂ ದೇವರು ತಮ್ಮ ಶಕ್ತಿಯಿಂದ ಪರಿಪೂರ್ಣಗೊಳಿಸುವಂತೆ ನಾವು ಯಾವಾಗಲೂ ನಿಮಗೋಸ್ಕರ ಪ್ರಾರ್ಥನೆ ಮಾಡುತ್ತೇವೆ.</verse>
				<verse number="12">ನಮ್ಮ ದೇವರ ಹಾಗೂ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯ ಅನುಸಾರವಾಗಿ, ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದಬೇಕು. ಮಾತ್ರವಲ್ಲದೇ ನೀವು ಕೂಡಾ ಅವರಲ್ಲಿ ಮಹಿಮೆ ಹೊಂದಬೇಕು ಎಂದು ಬೇಡಿಕೊಳ್ಳುತ್ತೇವೆ.</verse>
			</chapter>
			<chapter number="2">
				<verse number="1">ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಬರುವಿಕೆಯನ್ನೂ ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನೂ ಕುರಿತು ನಾವು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ:</verse>
				<verse number="2">ಕ್ರಿಸ್ತ ಯೇಸುವಿನ ದಿನವು ಈಗಾಗಲೇ ಬಂದಿದೆಯೆಂದು ಪ್ರವಾದನೆಯಿಂದಾಗಲಿ, ಪ್ರಸಂಗದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದು ನೀವು ಬೇಗನೆ ಚಂಚಲರಾಗಿ ಕಳವಳಪಡಬೇಡಿರಿ.</verse>
				<verse number="3">ನಿಮ್ಮನ್ನು ಯಾರೂ ಯಾವ ವಿಧದಲ್ಲಿಯೂ ವಂಚಿಸದಿರಲಿ. ಏಕೆಂದರೆ ವಿಶ್ವಾಸದಿಂದ ಬಿದ್ದುಹೋಗುವಿಕೆಯು ಸಂಭವಿಸಿ, ನಾಶಕ್ಕೆ ನೇಮಕವಾಗಿರುವ ನಿಯಮ ಮೀರುವ ಮನುಷ್ಯನು ಬರುವುದಕ್ಕೆ ಮುಂಚೆ ಕರ್ತ ಯೇಸುವಿನ ದಿನವು ಬರುವುದಿಲ್ಲ!</verse>
				<verse number="4">ದೇವರೆಣಿಸಿಕೊಳ್ಳುವ ಎಲ್ಲವನ್ನೂ ಆರಾಧಿಸಲಾಗುವ ಪ್ರತಿಯೊಂದನ್ನೂ ಅವನು ವಿರೋಧಿಸಿ ನಿಲ್ಲುವನು. ದೇವರಿಗೆ ಸಂಬಂಧಿಸಿದ ಇವೆಲ್ಲವುಗಳ ಮೇಲೆ ತನ್ನನ್ನು ಹೆಚ್ಚಿಸಿಕೊಳ್ಳುವನು. ತಾನೇ ದೇವರೆಂದು ಘೋಷಿಸಿ ದೇವರ ಆಲಯದಲ್ಲಿ ಕೂತುಕೊಳ್ಳುವನು.</verse>
				<verse number="5">ನಾನು ನಿಮ್ಮ ಸಂಗಡ ಇರುವಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ?</verse>
				<verse number="6">ಇದಲ್ಲದೆ ಅವನು ನಿಯಮಿತ ಕಾಲದಲ್ಲಿ ಮಾತ್ರ ಕಾಣಿಸಿಕೊಳ್ಳುವಂತೆ ಈಗ ಅವನನ್ನು ಏನು ಅಡ್ಡಿಮಾಡುತ್ತಿದೆಯೋ ಅದನ್ನು ನೀವೇ ಬಲ್ಲಿರಿ.</verse>
				<verse number="7">ಏಕೆಂದರೆ, ನಿಯಮ ಮೀರುವ ರಹಸ್ಯ ಶಕ್ತಿಯು ಈಗಾಗಲೇ ಕಾರ್ಯಮಾಡುತ್ತಿದೆ. ಅವನನ್ನು ದಾರಿಯಿಂದ ತೆಗೆಯುವವರೆಗೆ ಈಗ ಅಡ್ಡಿಮಾಡುವಾತನು ಅಡ್ಡಿ ಮಾಡುತ್ತಲೇ ಇರುವನು.</verse>
				<verse number="8">ಆಗ ಆ ನಿಯಮ ಮೀರುವವನು ಪ್ರತ್ಯಕ್ಷನಾಗುವನು. ಅವನನ್ನು ಕರ್ತ ಯೇಸು ತಮ್ಮ ಬಾಯಿಯ ಶ್ವಾಸದಿಂದ ಕೆಡವಿ, ತಮ್ಮ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಮಾಡಿಬಿಡುವರು.</verse>
				<verse number="9">ಆ ನಿಯಮ ಮೀರುವವನ ಬರುವಿಕೆಯು ಸೈತಾನನ ಕಾರ್ಯಗಳಿಗೆ ಅನುಸಾರವಾಗಿರುವುದು. ಅವು ಎಲ್ಲಾ ಶಕ್ತಿಯ ಪ್ರದರ್ಶನದಿಂದಲೂ ಸುಳ್ಳಾದ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಇರುವವು.</verse>
				<verse number="10">ಎಲ್ಲಾ ವಿಧವಾದ ದುಷ್ಟತನದ ವಂಚನೆಯಿಂದಲೂ ಕೂಡಿ ನಾಶವಾಗುವವರಲ್ಲಿ ಇದು ಸಂಭವಿಸುವುದು. ಏಕೆಂದರೆ ಅವರು ರಕ್ಷಣೆ ಹೊಂದುವಂತೆ ಸತ್ಯವನ್ನು ಪ್ರೀತಿಸಲು ನಿರಾಕರಿಸಿದ ಕಾರಣದಿಂದ ನಾಶವಾಗಿ ಹೋಗುವರು.</verse>
				<verse number="11">ಇದೇ ಕಾರಣದಿಂದ ದೇವರು ಅವರ ಮೇಲೆ ವಂಚಿಸಲು ಶಕ್ತಿಯುಳ್ಳ ಭ್ರಮೆಯನ್ನು ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುವರು.</verse>
				<verse number="12">ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಿಸುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಗುರಿಯಾಗುವರು.</verse>
				<verse number="13">ಕರ್ತ ಯೇಸುವಿಗೆ ಪ್ರಿಯರಾಗಿರುವವರೇ, ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ಏಕೆಂದರೆ, ನೀವು ಪವಿತ್ರಾತ್ಮ ದೇವರ ಶುದ್ಧೀಕರಣದಿಂದಲೂ ಸತ್ಯವನ್ನು ನಂಬುವುದರಿಂದಲೂ ರಕ್ಷಣೆಯನ್ನು ಹೊಂದಿ ಪ್ರಥಮ ಫಲವಾಗುವುದಕ್ಕೆ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡಿದ್ದಾರೆ.</verse>
				<verse number="14">ನಾವು ನಿಮಗೆ ತಿಳಿಸಿದ ಸುವಾರ್ತೆಯ ಮೂಲಕವಾಗಿ, ನೀವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮಹಿಮೆಯನ್ನು ಸಂಪಾದಿಸಿಕೊಳ್ಳಬೇಕೆಂದು ದೇವರು ನಿಮ್ಮನ್ನು ಈ ಆಯ್ಕೆಗಾಗಿ ಕರೆದರು.</verse>
				<verse number="15">ಹೀಗಿರುವುದರಿಂದ ಪ್ರಿಯರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ, ಪತ್ರದಿಂದಾಗಲಿ ನಿಮಗೆ ಕಲಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಪಾಲಿಸಿರಿ.</verse>
				<verse number="16">ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಹಾಗೂ ನಮ್ಮ ತಂದೆ ದೇವರು ನಮ್ಮನ್ನು ಪ್ರೀತಿಸಿ ಕೃಪೆಯಿಂದ ಕೊಟ್ಟಿರುವ ನಮಗೆ ನಿತ್ಯ ಆದರಣೆಯನ್ನೂ ಒಳ್ಳೆಯ ನಿರೀಕ್ಷೆಯನ್ನೂ ನೀಡಿ,</verse>
				<verse number="17">ನಿಮ್ಮ ಹೃದಯಗಳನ್ನು ಸಂತೈಸಿ, ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.</verse>
			</chapter>
			<chapter number="3">
				<verse number="1">ಕೊನೆಯದಾಗಿ ಪ್ರಿಯರೇ, ಕರ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಹಬ್ಬಿದಂತೆ ಎಲ್ಲ ಕಡೆಗಳಲ್ಲಿಯೂ ಅತಿವೇಗದಿಂದ ಹಬ್ಬಿ ಹರಡುವಂತೆ ನಮಗಾಗಿ ಬೇಡಿಕೊಳ್ಳಿರಿ.</verse>
				<verse number="2">ವಕ್ರಬುದ್ಧಿಯುಳ್ಳ ದುಷ್ಟರ ಕೈಯಿಂದ ನಾವು ತಪ್ಪಿಸಿಕೊಳ್ಳುವಂತೆಯೂ ಪ್ರಾರ್ಥಿಸಿರಿ. ಏಕೆಂದರೆ ಎಲ್ಲರಲ್ಲಿಯೂ ವಿಶ್ವಾಸವಿಲ್ಲವಲ್ಲಾ.</verse>
				<verse number="3">ಆದರೆ ಕರ್ತ ಯೇಸು ನಂಬಿಗಸ್ತರು, ಅವರು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೆಡುಕನಿಂದ ತಪ್ಪಿಸುವರು.</verse>
				<verse number="4">ನಾವು ನಿಮಗೆ ಆಜ್ಞಾಪಿಸಿದವುಗಳನ್ನು ನೀವು ಮಾಡುತ್ತೀರೆಂತಲೂ ಮುಂದೆಯೂ ಮಾಡುವಿರೆಂತಲೂ ನಿಮ್ಮ ವಿಷಯವಾಗಿ ಕರ್ತ ಯೇಸುವಿನಲ್ಲಿ ನಮಗೆ ಭರವಸೆಯಿದೆ.</verse>
				<verse number="5">ಕರ್ತ ಯೇಸು ದೇವರ ಪ್ರೀತಿಯಲ್ಲಿಯೂ ತಮ್ಮ ತಾಳ್ಮೆಯಲ್ಲಿಯೂ ನಿಮ್ಮ ಹೃದಯಗಳನ್ನು ನಡೆಸಲಿ.</verse>
				<verse number="6">ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ, ನಮ್ಮಿಂದ ಸ್ವೀಕರಿಸಿದ ಬೋಧನೆಯನ್ನು ಅನುಸರಿಸದೆ, ಸೋಮಾರಿಯಾಗಿ ಅಶಿಸ್ತಿನಿಂದ ನಡೆಯುವ ಪ್ರತಿ ವಿಶ್ವಾಸಿಗೆ ನೀವು ದೂರವಾಗಿರಬೇಕು.</verse>
				<verse number="7">ನೀವು ನಮ್ಮ ಮಾದರಿಯನ್ನು ಅನುಸರಿಸಿ ಹೇಗೆ ನಡೆಯಬೇಕೆಂದು ನೀವೇ ಬಲ್ಲಿರಿ. ಏಕೆಂದರೆ ನಾವು ನಿಮ್ಮಲ್ಲಿರುವಾಗ ಸೋಮಾರಿಗಳಾಗಿರಲಿಲ್ಲ.</verse>
				<verse number="8">ನಾವು ಉಚಿತವಾಗಿ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರದೆಂದು ಹಗಲಿರುಳೂ ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದೆವು.</verse>
				<verse number="9">ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದಲ್ಲ. ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಆದರ್ಶರಾಗಿರಬೇಕೆಂದು ಹಾಗೆ ಮಾಡಿದೆವು.</verse>
				<verse number="10">ನಾವು ನಿಮ್ಮ ಸಂಗಡ ಇದ್ದಾಗ, “ಕೆಲಸ ಮಾಡಲೊಲ್ಲದವನು ಉಣ್ಣಲೂಬಾರದು,” ಎಂದು ನಿಮಗೆ ಆಜ್ಞಾಪಿಸಿದ್ದೆವು.</verse>
				<verse number="11">ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಕೆಲಸದಲ್ಲಿ ಮಾತ್ರ ತಲೆಹಾಕಿ ಅಶಿಸ್ತಿನಿಂದ ನಡೆಯುತ್ತಾರೆಂದು ಕೇಳಿದ್ದೇವೆ.</verse>
				<verse number="12">ಅಂಥವರು ಶಾಂತವಾಗಿ ಕೆಲಸಮಾಡಿ ತಮ್ಮ ಸ್ವಂತ ಆಹಾರವನ್ನೇ ಊಟ ಮಾಡಬೇಕೆಂದು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.</verse>
				<verse number="13">ಪ್ರಿಯರೇ, ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ.</verse>
				<verse number="14">ಈ ಪತ್ರದ ಮೂಲಕ ಹೇಳಿರುವ ನಮ್ಮ ಮಾತಿಗೆ ಯಾರಾದರೂ ವಿಧೇಯರಾಗದಿದ್ದರೆ ಅಂಥವರನ್ನು ಗುರುತಿಸಿ ಅವರಿಗೆ ನಾಚಿಕೆಯಾಗುವಂತೆ ಅವರ ಸಹವಾಸದಲ್ಲಿ ಸೇರಬೇಡಿರಿ.</verse>
				<verse number="15">ಆದರೂ ಅಂಥವರನ್ನು ವೈರಿಯೆಂದು ಎಣಿಸದೆ, ಜೊತೆ ವಿಶ್ವಾಸಿಯೆಂದು ಭಾವಿಸಿ ಬುದ್ಧಿಹೇಳಿರಿ.</verse>
				<verse number="16">ನಮಗೆ ಕರ್ತ ಆಗಿರುವ ಯೇಸು ಈ ಸಮಾಧಾನದಲ್ಲಿ ತಾವೇ ಸದಾಕಾಲದಲ್ಲಿಯೂ ಸಕಲ ವಿಧದಲ್ಲಿಯೂ ನಿಮಗೆ ಸಮಾಧಾನವನ್ನು ದಯಪಾಲಿಸಲಿ. ಕರ್ತದೇವರು ನಿಮ್ಮೆಲ್ಲರೊಂದಿಗೆ ಇರಲಿ.</verse>
				<verse number="17">ಪೌಲನೆಂಬ ನಾನು ಸ್ವತಃ ನನ್ನ ಕೈಯಿಂದ ಬರೆದ ವಂದನೆಯಿದು. ನನ್ನ ಎಲ್ಲಾ ಪತ್ರಗಳಲ್ಲಿಯೂ ಇದೇ ಗುರುತು. ನಾನು ಹೀಗೆಯೇ ಬರೆಯುತ್ತೇನೆ.</verse>
				<verse number="18">ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮೆಲ್ಲರ ಸಂಗಡ ಇರಲಿ.</verse>
			</chapter>
		</book>
		<book number="54">
			<chapter number="1">
				<verse number="1">ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು, ನಮಗೆ ರಕ್ಷಕ ಆಗಿರುವ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತ ಯೇಸುವಿನ ಆಜ್ಞಾನುಸಾರ,</verse>
				<verse number="2">ನಂಬಿಕೆಯಲ್ಲಿ ನನ್ನ ನಿಜ ಪುತ್ರನಾಗಿರುವ ತಿಮೊಥೆಯನಿಗೆ ಬರೆಯುವುದು: ನಮ್ಮ ತಂದೆ ದೇವರಿಂದಲೂ, ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ದೊರೆಯಲಿ.</verse>
				<verse number="3">ನಾನು ಮಕೆದೋನ್ಯಕ್ಕೆ ಹೋದಾಗ ನೀನು ಎಫೆಸದಲ್ಲಿ ಇದ್ದುಕೊಂಡು ಸುಳ್ಳು ಬೋಧನೆಯನ್ನು ಉಪದೇಶಿಸಬಾರದೆಂತಲೂ</verse>
				<verse number="4">ಕಟ್ಟುಕಥೆಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಕೆಲವರಿಗೆ ಆಜ್ಞಾಪಿಸಬೇಕೆಂದು ನಾನು ನಿನಗೆ ಖಂಡಿತವಾಗಿ ಹೇಳಿದಂತೆ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆಯಿಂದುಂಟಾಗುವ ದೇವರ ಕಾರ್ಯಭಾರವನ್ನು ವೃದ್ಧಿ ಮಾಡುವುದೇ ಇಲ್ಲ.</verse>
				<verse number="5">ಈ ಆಜ್ಞೆಯ ಗುರಿಯು ಪ್ರೀತಿಯೇ ಆಗಿರುತ್ತದೆ. ಶುದ್ಧ ಹೃದಯ, ಒಳ್ಳೆಯ ಮನಸ್ಸಾಕ್ಷಿ ಹಾಗೂ ನಿಷ್ಕಪಟವಾದ ನಂಬಿಕೆಯಿಂದ ಈ ಪ್ರೀತಿಯು ಹುಟ್ಟುತ್ತದೆ.</verse>
				<verse number="6">ಕೆಲವರು ಇವುಗಳನ್ನು ಬಿಟ್ಟುಬಿಟ್ಟು ವ್ಯರ್ಥವಾದ ಮಾತುಗಳಿಗೆ ತಿರುಗಿಕೊಂಡಿದ್ದಾರೆ.</verse>
				<verse number="7">ಅವರು ನಿಯಮದ ಬೋಧಕರಾಗಿರಲು ಬಯಸಿದರೂ ತಾವು ಹೇಳುವುದನ್ನಾಗಲಿ, ತಾವು ಸ್ಥಾಪಿಸುವುದನ್ನಾಗಲಿ ಏನೆಂದು ದೃಢನಿಶ್ಚಯವಿಲ್ಲದವರಾಗಿದ್ದಾರೆ.</verse>
				<verse number="8">ಒಬ್ಬನು ನಿಯಮವನ್ನು ಸರಿಯಾಗಿ ಉಪಯೋಗಿಸುವುದಾದರೆ ಅದು ಒಳ್ಳೆಯದೆಂದು ನಾವು ಬಲ್ಲೆವು.</verse>
				<verse number="9">ನಿಯಮವು ನೀತಿವಂತರಿಗೋಸ್ಕರ ಅಲ್ಲ. ಬದಲಿಗೆ ಅದು ಅವಿಧೇಯರಿಗೆ, ಅಕ್ರಮಗಾರರಿಗೆ, ಭಕ್ತಿಹೀನರಿಗೆ, ಪಾಪಿಗಳಿಗೆ, ಅಶುದ್ಧರಿಗೆ, ಅಪವಿತ್ರರಿಗೆ, ತಂದೆತಾಯಿಗಳನ್ನು ಕೊಲ್ಲುವವರಿಗೆ, ಕೊಲೆಗಾರರಿಗೆ,</verse>
				<verse number="10">ಜಾರರಿಗೆ, ಸಲಿಂಗಕಾಮಿಗಳಿಗೆ, ನರಚೋರರಿಗೆ, ಸುಳ್ಳುಗಾರರಿಗೆ, ಸುಳ್ಳಾಣೆಯಿಡುವವರಿಗೆ, ಸ್ವಸ್ಥಬೋಧನೆಯನ್ನು ವಿರೋಧಿಸುವ ಬೇರೆ ಏನಾದರೂ ಇದ್ದರೆ ಮೋಶೆಯ ನಿಯಮವು ಇಂಥವವರಿಗಾಗಿ ಕೊಡಲಾಗಿದೆ ಎಂದು ನಮಗೆ ತಿಳಿದಿದೆ.</verse>
				<verse number="11">ಈ ಬೋಧನೆಯು ಭಾಗ್ಯವಂತರಾದ ದೇವರ ಮಹಿಮೆಯ ಸುವಾರ್ತೆಗೆ ಅನುರೂಪವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲಾಗಿದೆ.</verse>
				<verse number="12">ನನ್ನನ್ನು ಬಲಪಡಿಸುವ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವು ನನ್ನನ್ನು ನಂಬಿಗಸ್ತನೆಂದು ಎಣಿಸಿ ಸೇವೆಗೆ ನೇಮಿಸಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.</verse>
				<verse number="13">ಮೊದಲು ದೇವದೂಷಕನೂ ಹಿಂಸಕನೂ ಅಪಮಾನ ಮಾಡುವವನೂ ಆಗಿದ್ದ ನಾನು ಅಜ್ಞಾನಿಯಾಗಿ ಅಪನಂಬಿಕೆಯಲ್ಲಿ ಹಾಗೆ ವರ್ತಿಸಿದ್ದರೂ ದೇವರು ನನಗೆ ಕರುಣೆತೋರಿದರು.</verse>
				<verse number="14">ಆದರೆ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಕೃಪೆಯು ನನಗೆ ಧಾರಾಳವಾಗಿ ಸುರಿಯಲಾಯಿತು. ಮಾತ್ರವಲ್ಲದೆ ವಿಶ್ವಾಸ ಪ್ರೀತಿಯೊಂದಿಗೆ ಅತ್ಯಧಿಕವಾಯಿತು.</verse>
				<verse number="15">ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದರು, ಎಂಬ ವಾಕ್ಯವು ನಂಬತಕ್ಕದ್ದೂ ಪೂರ್ಣ ಅಂಗೀಕಾರಕ್ಕೆ ಯೋಗ್ಯವಾದದ್ದೂ ಆಗಿದೆ. ಆ ಪಾಪಿಗಳಲ್ಲಿ ನಾನೇ ಮುಖ್ಯನು.</verse>
				<verse number="16">ಆದರೂ ಇನ್ನು ಮುಂದೆ ನಿತ್ಯಜೀವಕ್ಕೆ ತಮ್ಮ ಮೇಲೆ ನಂಬಿಕೆಯಿಡುವವರಿಗೆ ದೃಷ್ಟಾಂತವಾಗಿರಬೇಕೆಂದು ಕ್ರಿಸ್ತ ಯೇಸು ಮುಖ್ಯ ಪಾಪಿಯಾದ ನನ್ನಲ್ಲಿ ತಮ್ಮ ಪೂರ್ಣ ಸಹನೆಯನ್ನು ತೋರ್ಪಡಿಸಿರುವುದಕ್ಕಾಗಿ ನನಗೆ ಕರುಣೆ ದೊರೆಯಿತು.</verse>
				<verse number="17">ನಿತ್ಯವಾದ ಅರಸರೂ ಅಮರರೂ ಅದೃಶ್ಯರೂ ಆಗಿರುವ ಜ್ಞಾನಿಯಾದ ಒಬ್ಬರೇ ದೇವರಿಗೆ ಯುಗಯುಗಾಂತರಗಳಲ್ಲಿಯೂ ಘನವೂ ಮಹಿಮೆಯೂ ಉಂಟಾಗಲಿ. ಆಮೆನ್.</verse>
				<verse number="18">ಮಗನಾದ ತಿಮೊಥೆಯನೇ, ನಿನ್ನ ವಿಷಯವಾಗಿ ಮೊದಲು ಉಂಟಾದ ಪ್ರವಾದನೆಗಳ ಪ್ರಕಾರವೇ ನೀನು ಅವುಗಳಿಂದ ಒಳ್ಳೆಯ ಯುದ್ಧವನ್ನು ನಡಿಸಬೇಕೆಂದು ಈ ಆಜ್ಞೆಯನ್ನು ನಿನಗೆ ಒಪ್ಪಿಸುತ್ತೇನೆ.</verse>
				<verse number="19">ನಂಬಿಗಸ್ತನೂ ಒಳ್ಳೆಯ ಮನಸ್ಸಾಕ್ಷಿಯುಳ್ಳವನೂ ಆಗಿರು. ಕೆಲವರು ಈ ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ಹಡಗನ್ನು ಒಡೆದವರ ಹಾಗೆ ಇದ್ದಾರೆ.</verse>
				<verse number="20">ಹುಮೆನಾಯನೂ ಅಲೆಕ್ಸಾಂಡರನೂ ಅಂಥವರಾಗಿದ್ದಾರೆ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ನಾನು ಸೈತಾನನಿಗೆ ಒಪ್ಪಿಸಿಬಿಟ್ಟಿದ್ದೇನೆ.</verse>
			</chapter>
			<chapter number="2">
				<verse number="1">ಎಲ್ಲದಕ್ಕಿಂತ ಮೊದಲು ಮನುಷ್ಯರೆಲ್ಲರಿಗೋಸ್ಕರವೂ ಅರಸರುಗಳಿಗಾಗಿಯೂ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಬಿನ್ನಹಗಳನ್ನೂ ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಪ್ರಬೋಧಿಸುತ್ತೇನೆ.</verse>
				<verse number="2">ಹೀಗೆ ಮಾಡಿದರೆ ನಾವು ನೆಮ್ಮದಿ ಹಾಗೂ ಸಮಾಧಾನಗಳಿಂದ ಕೂಡಿದ ಜೀವನವನ್ನು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ನಡೆಸುವುದಕ್ಕಾಗುವುದು.</verse>
				<verse number="3">ಏಕೆಂದರೆ ಇದು ನಮ್ಮ ರಕ್ಷಕರಾದ ದೇವರ ಮುಂದೆ ಒಳ್ಳೆಯದಾಗಿಯೂ ಅಂಗೀಕರಿಸತಕ್ಕದ್ದಾಗಿಯೂ ಇದೆ.</verse>
				<verse number="4">ಎಲ್ಲಾ ಮನುಷ್ಯರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಬರಬೇಕೆಂಬುದು ದೇವರ ಚಿತ್ತವಾಗಿದೆ.</verse>
				<verse number="5">ದೇವರು ಒಬ್ಬರೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥ ಒಬ್ಬರೇ. ಅವರು ಮನುಷ್ಯರಾಗಿ ಬಂದ ಕ್ರಿಸ್ತ ಯೇಸುವೇ.</verse>
				<verse number="6">ಯೇಸು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು. ಇದೇ ಸೂಕ್ತ ಸಮಯದಲ್ಲಿ ನೀಡಬೇಕಾದ ಸಾಕ್ಷಿಯಾಗಿದೆ.</verse>
				<verse number="7">ಇದಕ್ಕಾಗಿಯೇ ಸಂದೇಶ ಸಾರುವವನೂ ಅಪೊಸ್ತಲನೂ ಆಗಿರುವ ನಾನು ಯೆಹೂದ್ಯರಲ್ಲದವರಿಗೆ ನಂಬಿಗಸ್ತನಾದ ಸತ್ಯ ಬೋಧಕನಾಗಿ ನೇಮಕವಾದೆನು. ಇದು ಸುಳ್ಳಲ್ಲ, ಸತ್ಯವನ್ನೇ ಹೇಳುತ್ತೇನೆ.</verse>
				<verse number="8">ಆದ್ದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಶುದ್ಧವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸುತ್ತೇನೆ.</verse>
				<verse number="9">ಹಾಗೆಯೇ ಸ್ತ್ರೀಯರು ಸಭ್ಯತೆ ಹಾಗೂ ಸ್ವಸ್ಥಬುದ್ಧಿಯುಳ್ಳವರಾಗಿದ್ದು ಗೌರವಕ್ಕೆ ತಕ್ಕ ಉಡುಪನ್ನುಟ್ಟುಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆ, ಚಿನ್ನ, ಮುತ್ತುಗಳು, ಬೆಲೆಯುಳ್ಳ ವಸ್ತ್ರ ಇವುಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳದೆ,</verse>
				<verse number="10">ದೇವ ಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ತಕ್ಕಂತೆ ಸತ್ಕ್ರಿಯೆಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳಬೇಕು.</verse>
				<verse number="11">ಸ್ತ್ರೀಯು ಮೌನವಾಗಿದ್ದು ಎಲ್ಲಾ ಅಧೀನತೆಯನ್ನು ಕಲಿಯಬೇಕು.</verse>
				<verse number="12">ಆದರೆ ಉಪದೇಶ ಮಾಡುವುದಕ್ಕಾಗಲಿ, ಪುರುಷನ ಮೇಲೆ ಅಧಿಕಾರ ನಡೆಸುವುದಕ್ಕಾಗಲಿ ಸ್ತ್ರೀಗೆ ನಾನು ಅಪ್ಪಣೆ ಕೊಡುವುದಿಲ್ಲ. ಆಕೆಯು ಮೌನವಾಗಿರಬೇಕು.</verse>
				<verse number="13">ಏಕೆಂದರೆ ಮೊದಲು ನಿರ್ಮಿತನಾದವನು ಆದಾಮನು, ಆಮೇಲೆ ಹವ್ವಳು.</verse>
				<verse number="14">ಆದಾಮನು ವಂಚನೆಗೊಳಗಾಗಲಿಲ್ಲ, ಸ್ತ್ರೀಯು ವಂಚನೆಗೊಳಗಾಗಿ ಅಪರಾಧಿಯಾದಳು.</verse>
				<verse number="15">ಆದರೂ ಸ್ತ್ರೀಯರು ಸ್ವಸ್ಥಬುದ್ಧಿಯಿಂದ ನಂಬಿಕೆ, ಪ್ರೀತಿ ಹಾಗೂ ಪರಿಶುದ್ಧತೆಯಲ್ಲಿ ನೆಲೆಗೊಂಡಿದ್ದರೆ ಅವರು ಮಗುವನ್ನು ಹೆರುವುದರ ಮೂಲಕ ರಕ್ಷಣೆಹೊಂದುವರು.</verse>
			</chapter>
			<chapter number="3">
				<verse number="1">ಸಭೆಯ ಮೇಲ್ವಿಚಾರಕನಾಗಲು ಬಯಸುವವನು ಒಳ್ಳೆಯ ಕೆಲಸವನ್ನು ಅಪೇಕ್ಷಿಸುವವನಾಗಿದ್ದಾನೆಂಬ ಮಾತು ನಂಬತಕ್ಕದ್ದಾಗಿದೆ.</verse>
				<verse number="2">ಸಭೆಯ ಮೇಲ್ವಿಚಾರಕನು ನಿಂದಾರಹಿತನಾಗಿ, ಏಕಪತ್ನಿಯುಳ್ಳವನೂ ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಗೌರವಸ್ಥನೂ ಅತಿಥಿ ಸತ್ಕಾರ ಮಾಡುವವನೂ ಬೋಧಿಸುವುದರಲ್ಲಿ ಪ್ರವೀಣನೂ ಆಗಿರಬೇಕು.</verse>
				<verse number="3">ಅವನು ಮದ್ಯಪಾನ ಮಾಡುವವನಾಗಿರಬಾರದು, ಹೊಡೆದಾಡುವವನಾಗಿರಬಾರದು. ಆದರೆ ಸಾತ್ವಿಕನೂ ಕುತರ್ಕ ಮಾಡದವನೂ ಹಣದಾಶೆಯಿಲ್ಲದವನೂ ಆಗಿರಬೇಕು.</verse>
				<verse number="4">ಪೂರ್ಣ ಗೌರವದಿಂದ ತನ್ನ ಮಕ್ಕಳನ್ನು ಅಧೀನದಲ್ಲಿಟ್ಟುಕೊಂಡು ಸ್ವಂತ ಮನೆಯವರನ್ನು ಚೆನ್ನಾಗಿ ಆಳುವವನಾಗಿರಬೇಕು.</verse>
				<verse number="5">ಸ್ವಂತ ಮನೆಯವರನ್ನು ಆಳುವುದಕ್ಕೆ ತಿಳಿಯದವನು ದೇವರ ಸಭೆಯನ್ನು ಹೇಗೆ ಪರಾಮರಿಸುವನು?</verse>
				<verse number="6">ಅವನು ಹೊಸದಾಗಿ ವಿಶ್ವಾಸಕ್ಕೆ ಬಂದವನಾಗಿರಬಾರದು. ಅಂಥವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಬಲಿಬೀಳುವನು.</verse>
				<verse number="7">ಇದಲ್ಲದೆ ಅವನು ನಿಂದೆಗೆ ಗುರಿಯಾಗದವನೂ ಸೈತಾನನ ಉರುಲಿಗೆ ಸಿಕ್ಕಿ ಬೀಳದವನೂ ಆಗಿದ್ದಾನೆಂಬ ಒಳ್ಳೆಯ ಸಾಕ್ಷಿಯನ್ನು ಹೊಂದಿದವನಾಗಿರಬೇಕು.</verse>
				<verse number="8">ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ನಾಲಿಗೆಯುಳ್ಳವರಾಗಿರಬಾರದು. ಮದ್ಯಾಸಕ್ತರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ</verse>
				<verse number="9">ನಂಬಿಕೆಯ ರಹಸ್ಯವನ್ನು ಶುದ್ಧಮನಸ್ಸಾಕ್ಷಿಯಿಂದ ಹಿಡಿದುಕೊಂಡವರಾಗಿರಬೇಕು.</verse>
				<verse number="10">ಇದಲ್ಲದೆ ಇವರು ಸಹ ಮೊದಲು ಪರೀಕ್ಷೆಗೊಳಪಡಬೇಕು. ಅವರು ನಿಂದಾರಹಿತರಾಗಿ ಕಂಡು ಬಂದರೆ ಸಭಾ ಹಿರಿಯರಾಗಿ ಸೇವೆಮಾಡಲಿ.</verse>
				<verse number="11">ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು. ಚಾಡಿ ಹೇಳದವರೂ ಸ್ವಸ್ಥ ಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು.</verse>
				<verse number="12">ಸಭಾಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು.</verse>
				<verse number="13">ಸಭಾ ಹಿರಿಯರಾಗಿ ಚೆನ್ನಾಗಿ ಸೇವೆ ಮಾಡಿದವರು ತಮಗೆ ಒಳ್ಳೆಯ ಸ್ಥಿತಿಯನ್ನೂ, ಕ್ರಿಸ್ತ ಯೇಸುವಿನಲ್ಲಿರುವ ವಿಶ್ವಾಸದಲ್ಲಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ.</verse>
				<verse number="14">ನಾನು ನಿನ್ನ ಬಳಿಗೆ ಬೇಗನೆ ಬರುವೆನೆಂಬ ನಿರೀಕ್ಷೆಯಿಂದಲೇ ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ.</verse>
				<verse number="15">ಒಂದು ವೇಳೆ ನಾನು ತಡ ಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಎಂದರೆ ಜೀವಸ್ವರೂಪರಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಿರಬೇಕು.</verse>
				<verse number="16">ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”</verse>
			</chapter>
			<chapter number="4">
				<verse number="1">ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಗೊಟ್ಟು ವಿಶ್ವಾಸದಲ್ಲಿ ಬಿದ್ದುಹೋಗುವರೆಂದು ಪವಿತ್ರಾತ್ಮ ದೇವರು ಸ್ಪಷ್ಟವಾಗಿ ಹೇಳುತ್ತಾರೆ.</verse>
				<verse number="2">ಅವರು ಕಪಟಿಗಳೂ ಸುಳ್ಳಾಡುವವರೂ ತಮ್ಮ ಮನಸ್ಸಾಕ್ಷಿಯ ಮೇಲೆ ಬರೆಯುಳ್ಳವರಾದರೂ ಆಗಿದ್ದು</verse>
				<verse number="3">ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ತಿಳಿದುಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವುದಕ್ಕೋಸ್ಕರ ದೇವರು ಸೃಷ್ಟಿಸಿದ ಆಹಾರವನ್ನು ತಿನ್ನಬಾರದೆಂತಲೂ ಆಜ್ಞಾಪಿಸುತ್ತಾರೆ.</verse>
				<verse number="4">ದೇವರು ಸೃಷ್ಟಿಸಿದ್ದೆಲ್ಲವೂ ಒಳ್ಳೆಯದಾಗಿದೆ. ಕೃತಜ್ಞತೆ ಮಾಡಿ ಸ್ವೀಕರಿಸುವ ಯಾವುದನ್ನೂ ತಿರಸ್ಕರಿಸಬೇಕಾಗಿಲ್ಲ.</verse>
				<verse number="5">ಅದು ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಪವಿತ್ರವಾಗುತ್ತದೆ.</verse>
				<verse number="6">ಈ ವಿಷಯಗಳನ್ನು ಸಹೋದರರಿಗೆ ತಿಳಿಸುವವನಾದರೆ ನೀನು ಅನುಸರಿಸುತ್ತಿರುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವನಾಗಿ ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವೆ.</verse>
				<verse number="7">ಪ್ರಾಪಂಚಿಕ ಹಾಗೂ ಅಜ್ಜಿ ಕಥೆಗಳನ್ನು ನಿರಾಕರಿಸಿ ನೀನು ದೇವಭಕ್ತಿಯನ್ನು ಅಭ್ಯಾಸ ಮಾಡಿಕೋ.</verse>
				<verse number="8">ದೇಹ ಸಾಧನೆಯೂ ಸ್ವಲ್ಪಮಟ್ಟಿಗೆ ಲಾಭಕರವಾಗಿದೆ. ಭಕ್ತಿಯಾದರೋ ಎಲ್ಲಾ ವಿಧದಲ್ಲಿಯೂ ಲಾಭಕರವಾದದ್ದು. ಅದಕ್ಕೆ ಈಗಲೂ ಮುಂದೆಯೂ ಜೀವ ವಾಗ್ದಾನ ಉಂಟು.</verse>
				<verse number="9">ಈ ಮಾತು ನಂಬತಕ್ಕದ್ದೂ ಪೂರ್ಣ ಅಂಗೀಕಾರಕ್ಕೆ ಯೋಗ್ಯವಾದದ್ದೂ ಆಗಿದೆ.</verse>
				<verse number="10">ಇದಕ್ಕಾಗಿ ನಾವು ಕಷ್ಟಪಡುತ್ತೇವೆ ಮತ್ತು ಪ್ರಯಾಸ ಪಡುತ್ತೇವೆ. ಏಕೆಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕ ಆಗಿರುವ ಜೀವಸ್ವರೂಪರಾದ ದೇವರನ್ನು ನಾವು ನಿರೀಕ್ಷಿಸಿದ್ದೇವೆ.</verse>
				<verse number="11">ಈ ವಿಷಯಗಳನ್ನು ಆಜ್ಞಾಪಿಸಿ ಬೋಧಿಸು.</verse>
				<verse number="12">ನಿನ್ನ ಯೌವನವನ್ನೂ ಯಾರೂ ತಾತ್ಸಾರ ಮಾಡದಿರಲಿ. ಆದರೆ ನಂಬುವವರಿಗೆ ನುಡಿಯಲ್ಲಿ, ನಡೆಯಲ್ಲಿ, ಪ್ರೀತಿಯಲ್ಲಿ, ವಿಶ್ವಾಸದಲ್ಲಿ, ಶುದ್ಧತ್ವದಲ್ಲಿ ನೀನೇ ಆದರ್ಶನಾಗಿರು.</verse>
				<verse number="13">ನಾನು ಬರುವ ತನಕ ಓದುವುದರಲ್ಲಿಯೂ ಎಚ್ಚರಿಸುವುದರಲ್ಲಿಯೂ ಬೋಧಿಸುವುದರಲ್ಲಿಯೂ ಲಕ್ಷ್ಯಕೊಡು.</verse>
				<verse number="14">ನಿನ್ನಲ್ಲಿರುವ ವರವನ್ನು ಅಲಕ್ಷ್ಯ ಮಾಡಬೇಡ. ಅದು ಸಭೆಯ ಹಿರಿಯರು ಪ್ರವಾದನೆಯ ಮೂಲಕ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ ನಿನಗೆ ಕೊಡಲಾಯಿತಲ್ಲವೇ?</verse>
				<verse number="15">ಈ ವಿಷಯಗಳನ್ನು ಧ್ಯಾನಿಸುವವನಾಗಿರು. ಇವುಗಳಲ್ಲಿಯೇ ನೆಲೆಗೊಂಡಿರು. ಹೀಗೆ ನಿನ್ನ ಪ್ರಗತಿಯು ಎಲ್ಲರಿಗೂ ಪ್ರಕಟವಾಗುವುದು.</verse>
				<verse number="16">ನಿನ್ನ ವಿಷಯದಲ್ಲಿಯೂ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿಯೇ ನಿರತನಾಗಿರು. ಹೀಗೆ ಮಾಡುವುದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವೆ.</verse>
			</chapter>
			<chapter number="5">
				<verse number="1">ವೃದ್ಧನನ್ನು ಗದರಿಸದೆ ತಂದೆಯಂತೆಯೂ ಯೌವನಸ್ಥರನ್ನು ಸಹೋದರರಂತೆಯೂ</verse>
				<verse number="2">ವೃದ್ಧ ಸ್ತ್ರೀಯರನ್ನು ತಾಯಿಯಂತೆಯೂ ಯೌವನ ಸ್ತ್ರೀಯರನ್ನು ಪೂರ್ಣ ಪವಿತ್ರತೆಯಿಂದ ಸಹೋದರಿಯರಂತೆಯೂ ಅವರವರಿಗೆ ಬುದ್ಧಿ ಹೇಳು.</verse>
				<verse number="3">ನಿಜವಾಗಿಯೂ ಕಷ್ಟದಲ್ಲಿರುವ ವಿಧವೆಯರನ್ನು ಗುರುತಿಸಿ ಅವರಿಗೆ ಸಹಾಯಮಾಡು.</verse>
				<verse number="4">ಆದರೆ ಯಾವ ವಿಧವೆಗಾದರೂ ಮಕ್ಕಳಾಗಲಿ, ಮೊಮ್ಮಕ್ಕಳಾಗಲಿ ಇದ್ದರೆ ಅವರೇ ಮೊದಲು ತಮ್ಮ ಮನೆಯಲ್ಲಿ ಭಕ್ತಿಯಿಂದಿರುವುದಕ್ಕೂ ತಂದೆತಾಯಿಗಳಿಗೆ ಪ್ರತ್ಯುಪಕಾರ ಮಾಡುವುದಕ್ಕೂ ಕಲಿತುಕೊಳ್ಳಲಿ. ಇದು ದೇವರ ದೃಷ್ಟಿಯಲ್ಲಿ ಮೆಚ್ಚಿಕೆಯಾದದ್ದು.</verse>
				<verse number="5">ನಿಜವಾಗಿಯೂ ಕಷ್ಟದಲ್ಲಿರುವ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲು ಇರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.</verse>
				<verse number="6">ಆದರೆ ಭೋಗಿಯಾಗಿರುವ ವಿಧವೆಯು ಬದುಕಿರುವಾಗಲೂ ಸತ್ತವಳೇ.</verse>
				<verse number="7">ವಿಧವೆಯರು ನಿಂದೆಗೆ ಗುರಿಯಾಗದಂತೆ ಇವುಗಳನ್ನು ಆಜ್ಞಾಪಿಸು.</verse>
				<verse number="8">ಯಾವನಾದರೂ ಸ್ವಂತದವರನ್ನು ವಿಶೇಷವಾಗಿ ತನ್ನ ಮನೆಯವರನ್ನು ಸಂರಕ್ಷಿಸದೆ ಹೋದರೆ ಅವನು ನಂಬಿಕೆಯನ್ನು ಅಲ್ಲಗಳೆದವನೂ ಅವಿಶ್ವಾಸಿಗಿಂತ ನೀಚನೂ ಆಗಿದ್ದಾನೆ.</verse>
				<verse number="9">ವಯಸ್ಸಿನಲ್ಲಿ ಅರವತ್ತಕ್ಕೆ ಕಡಿಮೆಯಿಲ್ಲದ ವಿಧವೆಯರನ್ನು ಮಾತ್ರ ವಿಧವೆಯರ ಪಟ್ಟಿಯಲ್ಲಿ ಸೇರಿಸು. ಅಂಥವಳು ಗಂಡನಿಗೆ ನಂಬಿಗಸ್ತಳಾಗಿದ್ದಿರಬೇಕು.</verse>
				<verse number="10">ಆಕೆಯು ಮಕ್ಕಳನ್ನು ಸಾಕಿದವಳೂ ಅತಿಥಿ ಸತ್ಕಾರ ಮಾಡಿದವಳೂ ಭಕ್ತರ ಪಾದಗಳನ್ನು ತೊಳೆದವಳೂ ಸಂಕಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಹೀಗೆ ಪ್ರತಿಯೊಂದು ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.</verse>
				<verse number="11">ಆದರೆ ಪ್ರಾಯದ ವಿಧವೆಯರನ್ನು ಪಟ್ಟಿಯಲ್ಲಿ ಸೇರಿಸಬೇಡ. ಏಕೆಂದರೆ ಅವರಲ್ಲಿ ದೈಹಿಕ ಅಪೇಕ್ಷೆಗಳು ಕ್ರಿಸ್ತ ಯೇಸುವಿನ ಮೇಲಿಟ್ಟ ಅವರ ಪ್ರತಿಷ್ಠೆಯನ್ನು ಸೋಲಿಸಿ, ಅವರು ಮದುವೆ ಮಾಡಿಕೊಳ್ಳುವಂತೆ ಮಾಡುವವು.</verse>
				<verse number="12">ಅಂಥವರು ತಮ್ಮ ಮೊದಲಿನ ನಂಬಿಕೆಯನ್ನು ಬಿಟ್ಟಿದ್ದರಿಂದ ತೀರ್ಪಿಗೆ ಗುರಿಯಾಗುವರು.</verse>
				<verse number="13">ಇದಲ್ಲದೆ ಅವರು ಮನೆಯಿಂದ ಮನೆಗೆ ತಿರುಗಾಡುತ್ತಾ ಸೋಮಾರಿತನವನ್ನು ಕಲಿಯುತ್ತಾರೆ. ಸೋಮಾರಿಗಳಾಗುವುದಷ್ಟೇ ಅಲ್ಲ, ಹರಟೆ ಮಾತನಾಡುವವರೂ ಇತರರ ಕೆಲಸದಲ್ಲಿ ತಲೆಹಾಕುವವರಾಗಿ ಆಡಬಾರದ ಮಾತುಗಳನ್ನಾಡುವವರೂ ಆಗುತ್ತಾರೆ.</verse>
				<verse number="14">ಆದ್ದರಿಂದ ಯೌವನಸ್ಥ ವಿಧವೆಯರು ಮದುವೆಮಾಡಿಕೊಂಡು, ಮಕ್ಕಳನ್ನು ಹೆತ್ತು, ಮನೆಯ ಕೆಲಸಮಾಡಿ, ವಿರೋಧಿಯ ನಿಂದೆಗೆ ಆಸ್ಪದ ಕೊಡಬಾರದೆಂಬುದೇ ನನ್ನ ಅಪೇಕ್ಷೆ.</verse>
				<verse number="15">ಈಗಾಗಲೇ ಕೆಲವರು ದಾರಿತಪ್ಪಿ ಸೈತಾನನನ್ನು ಹಿಂಬಾಲಿಸಿದ್ದಾರೆ.</verse>
				<verse number="16">ವಿಶ್ವಾಸಿಯಾದ ಸ್ತ್ರೀಯ ಕುಟುಂಬದಲ್ಲಿ ವಿಧವೆಯರಿದ್ದರೆ, ಆಕೆ ಇಂಥವರನ್ನು ಸಂರಕ್ಷಿಸಲಿ. ಸಭೆಯು ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸಬೇಕಾಗಿರುವುದರಿಂದ ಆ ಭಾರವನ್ನು ಸಭೆಯ ಮೇಲೆ ಹಾಕಬಾರದು.</verse>
				<verse number="17">ಸಭಾಕಾರ್ಯಗಳನ್ನು ಸರಿಯಾಗಿ ನಡೆಸುತ್ತಿರುವ ಹಿರಿಯರು, ವಿಶೇಷವಾಗಿ ವಾಕ್ಯದಲ್ಲಿಯೂ ಬೋಧನೆಯಲ್ಲಿಯೂ ಶ್ರಮಿಸುತ್ತಿರುವವರು ಇಮ್ಮಡಿಯಾದ ಗೌರವಕ್ಕೆ ಯೋಗ್ಯರೆಂದು ಎಣಿಸಬೇಕು.</verse>
				<verse number="18">ಏಕೆಂದರೆ, “ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು!” ಎಂತಲೂ, “ಕೆಲಸದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ!” ಎಂತಲೂ ಪವಿತ್ರ ವೇದದಲ್ಲಿ ಹೇಳಿದೆಯಲ್ಲಾ.</verse>
				<verse number="19">ಹಿರಿಯನ ಮೇಲೆ ಯಾರಾದರೂ ದೂರು ಹೇಳಿದರೆ, ಇಬ್ಬರ ಇಲ್ಲವೆ ಮೂವರ ಸಾಕ್ಷಿ ಇಲ್ಲದೆ ಅದನ್ನು ಅಂಗೀಕರಿಸಬೇಡ.</verse>
				<verse number="20">ಪಾಪಮಾಡುವ ಹಿರಿಯರನ್ನು ಎಲ್ಲರ ಮುಂದೆಯೇ ಗದರಿಸು. ಇದರಿಂದ ಇತರರಿಗೂ ಎಚ್ಚರಿಕೆಯಾಗುವುದು.</verse>
				<verse number="21">ನೀನು ವಿಚಾರಿಸುವುದಕ್ಕೆ ಮೊದಲೇ ತೀರ್ಮಾನಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಗೊಳ್ಳಬೇಕೆಂದು ದೇವರ ಮುಂದೆಯೂ ಕ್ರಿಸ್ತ ಯೇಸುವಿನ ಮುಂದೆಯೂ ಆಯ್ಕೆಯಾದ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.</verse>
				<verse number="22">ಅವಸರದಿಂದ ಯಾರ ಮೇಲೆಯೂ ಹಸ್ತವನ್ನಿಟ್ಟು, ಸಭಾ ಹಿರಿಯರನ್ನಾಗಿ ನೇಮಿಸಬೇಡ. ಇತರರ ಪಾಪಗಳಲ್ಲಿ ಪಾಲುಗಾರನಾಗಬೇಡ. ನಿನ್ನನ್ನು ಶುದ್ಧನಾಗಿ ಕಾಪಾಡಿಕೋ.</verse>
				<verse number="23">ನೀರನ್ನು ಮಾತ್ರ ಕುಡಿಯದೆ ನಿನ್ನ ಹೊಟ್ಟೆಯ ನಿಮಿತ್ತವಾಗಿಯೂ ನಿನಗೆ ಆಗಾಗ್ಗೆ ಉಂಟಾಗುವ ಬಲಹೀನತೆಗಳಿಗಾಗಿಯೂ ಸ್ವಲ್ಪ ದ್ರಾಕ್ಷಾರಸವನ್ನು ಉಪಯೋಗಿಸು.</verse>
				<verse number="24">ಕೆಲವರ ಪಾಪಗಳು ತೀರ್ಪಿಗೆ ಮುಂಚೆಯೇ ಬಹಿರಂಗವಾಗುತ್ತವೆ. ಇನ್ನು ಕೆಲವರ ಪಾಪಗಳು ಕ್ರಮೇಣವಾಗಿ ಕಂಡುಬರುತ್ತವೆ.</verse>
				<verse number="25">ಅದರಂತೆಯೇ ಕೆಲವರ ಒಳ್ಳೆಯ ಕ್ರಿಯೆಗಳು ಮುಂಚೆಯೇ ಪ್ರತ್ಯಕ್ಷವಾಗಿರುತ್ತವೆ. ಪ್ರತ್ಯಕ್ಷವಾಗದಿರುವ ಒಳ್ಳೆಯ ಕ್ರಿಯೆಗಳು ನಿರಂತರವಾಗಿ ಮರೆಯಾಗಿರಲಾರವು.</verse>
			</chapter>
			<chapter number="6">
				<verse number="1">ದೇವರ ನಾಮವೂ ನಮ್ಮ ಬೋಧನೆಯೂ ದೂಷಣೆಗೆ ಗುರಿಯಾಗದಂತೆ ದಾಸತ್ವದ ನೊಗ ಹೊತ್ತಿರುವವರು ತಮ್ಮ ಸ್ವಂತ ಯಜಮಾನರನ್ನು ಪೂರ್ಣ ಗೌರವಕ್ಕೆ ಯೋಗ್ಯರೆಂದೆಣಿಸಲಿ.</verse>
				<verse number="2">ವಿಶ್ವಾಸಿಗಳಾದ ಯಜಮಾನರಿರುವವರು ಆ ಯಜಮಾನರು ಸಹೋದರನಾಗಿರುವುದರಿಂದ ಅವರನ್ನು ತಾತ್ಸಾರ ಮಾಡದಿರಲಿ. ಏಕೆಂದರೆ ತಮ್ಮ ಸೇವೆಯಿಂದ ಲಾಭ ಹೊಂದುವವರು ವಿಶ್ವಾಸಿಗಳು ಮತ್ತು ತಮಗೆ ಪ್ರಿಯರಾಗಿದ್ದಾರೆ ಎಂದು ತಿಳಿದು ಅವರಿಗೆ ಉತ್ತಮ ಸೇವೆಮಾಡಲಿ. ಇವುಗಳನ್ನು ಅವರಿಗೆ ಬೋಧಿಸಿ ಎಚ್ಚರಿಸು.</verse>
				<verse number="3">ಯಾವನಾದರೂ ಬೇರೆ ವಿಧವಾದ ಉಪದೇಶವನ್ನು ಮಾಡಿ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಶುದ್ಧವಾದ ಮಾತುಗಳಿಗೂ ಭಕ್ತಿಗೆ ಅನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ,</verse>
				<verse number="4">ಅಂಥವರು ಅಹಂಕಾರಿಯೂ ವಿವೇಕರಹಿತನಾಗಿದ್ದಾರೆ. ಅವರು ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯಪಡುವ ಭ್ರಾಂತರಾಗಿ ಸತ್ಯವನ್ನು ಬಿಟ್ಟು, ಕುತರ್ಕ ವಾಗ್ವಾದಗಳನ್ನು ಮಾಡುವವರಾಗಿದ್ದಾರೆ.</verse>
				<verse number="5">ಹೀಗೆ ಅನಾರೋಗ್ಯಕರವಾದ ವಿವಾದಗಳನ್ನೂ ಕೆಲವು ಮಾತುಗಳ ಕುರಿತಾಗಿರುವ ತರ್ಕಗಳನ್ನೂ ಸೃಷ್ಟಿಸುವ ಪ್ರಸಿದ್ಧರಾಗಿದ್ದಾರೆ. ಅಂಥವರು ದೇವಭಕ್ತಿಯನ್ನು ಆರ್ಥಿಕ ಲಾಭವನ್ನಾಗಿ ಭಾವಿಸುವವರಾಗಿದ್ದಾರೆ.</verse>
				<verse number="6">ಸಂತೃಪ್ತಿಯೊಂದಿಗಿರುವ ದೇವಭಕ್ತಿಯೇ ದೊಡ್ಡ ಲಾಭವು.</verse>
				<verse number="7">ನಾವು ಲೋಕದೊಳಗೆ ಏನನ್ನೂ ತೆಗೆದುಕೊಂಡು ಬರಲಿಲ್ಲ. ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು.</verse>
				<verse number="8">ಆದರೆ ಅನ್ನವಸ್ತ್ರಗಳು ನಮಗಿರುವುದಾದರೆ, ನಾವು ಅದರಲ್ಲಿ ತೃಪ್ತರಾಗಿರೋಣ.</verse>
				<verse number="9">ಆದರೆ ಐಶ್ವರ್ಯವಂತರಾಗಬೇಕೆಂದು ಬಯಸುವವರು ಶೋಧನೆಯಲ್ಲಿಯೂ ಉರುಲಿನಲ್ಲಿಯೂ ಬಿದ್ದು ಅನೇಕ ಬುದ್ಧಿಹೀನವಾದ ಹಾಗೂ ಹಾನಿಕರವಾದ ಆಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ವಿನಾಶನಗಳಲ್ಲಿ ಮುಳುಗಿಸುತ್ತವೆ.</verse>
				<verse number="10">ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಬೇರಾಗಿದೆ. ಕೆಲವರು ಹಣಕ್ಕಾಗಿ ಆತುರಪಟ್ಟು ನಂಬಿಕೆಯಿಂದ ದೂರಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.</verse>
				<verse number="11">ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ಓಡಿಹೋಗು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತ್ವ ಇವುಗಳನ್ನು ಹಿಂಬಾಲಿಸು.</verse>
				<verse number="12">ವಿಶ್ವಾಸದ ಒಳ್ಳೆಯ ಹೋರಾಟವನ್ನು ಮಾಡು. ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ದೇವರು ನಿನ್ನನ್ನು ಕರೆದಿದ್ದಾರೆ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಅರಿಕೆಯನ್ನು ಮಾಡಿದ್ದೀಯಲ್ಲಾ?</verse>
				<verse number="13">ಎಲ್ಲಕ್ಕೂ ಜೀವ ನೀಡುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಒಳ್ಳೆಯ ಅರಿಕೆಯನ್ನು ಸಾಕ್ಷಿಯಾಗಿ ನೀಡಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳವುದೇನೆಂದರೆ:</verse>
				<verse number="14">ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಪ್ರತ್ಯಕ್ಷರಾಗುವ ತನಕ ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ನೀನು ಕಾಪಾಡಬೇಕು.</verse>
				<verse number="15">ರಾಜಾಧಿರಾಜನೂ ಕರ್ತರ ಕರ್ತನೂ ಭಾಗ್ಯವಂತರಾದ ಏಕಾಧಿಪತಿಯು ತಮ್ಮ ಸಮಯಗಳಲ್ಲೆ ಕ್ರಿಸ್ತ ಯೇಸುವನ್ನು ಪ್ರತ್ಯಕ್ಷಪಡಿಸುವರು.</verse>
				<verse number="16">ದೇವರೊಬ್ಬರೇ ಅಮರತ್ವವುಳ್ಳವರೂ ಯಾರೂ ಸಮೀಪಿಸಲಾರದ ಬೆಳಕಿನಲ್ಲಿ ವಾಸಿಸುವವರೂ ಆಗಿದ್ದಾರೆ. ಯಾವ ಮನುಷ್ಯನೂ ದೇವರನ್ನು ಕಾಣಲಿಲ್ಲ. ಯಾರೂ ಕಾಣಲಾರರು. ದೇವರಿಗೆ ಮಾನವೂ ಬಲವೂ ಸದಾಕಾಲಕ್ಕೂ ಇರಲಿ. ಆಮೆನ್.</verse>
				<verse number="17">ಈ ಲೋಕದಲ್ಲಿ ಅಹಂಕಾರಿಗಳಾಗಿರದೆ, ಅಸ್ತಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಸುಖಕ್ಕೋಸ್ಕರ ಎಲ್ಲವನ್ನೂ ಸಮೃದ್ಧಿಯಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕೆಂದು ಐಶ್ವರ್ಯವಂತರಿಗೆ ಆಜ್ಞಾಪಿಸು.</verse>
				<verse number="18">ಅಂಥವರು ಒಳ್ಳೆಯದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲು ಕೊಡುವುದರಲ್ಲಿ ಸಿದ್ಧರಾಗಿರುವವರೂ ಪರೋಪಕಾರ ಮಾಡುವವರೂ ಆಗಿರಬೇಕೆಂದು ಅವರನ್ನು ಪ್ರಬೋಧಿಸು.</verse>
				<verse number="19">ಹೀಗೆ ಮುಂದಿನ ಕಾಲಕ್ಕೆ ಯಥಾರ್ಥ ಜೀವವಾಗಿರುವ ನಿತ್ಯಜೀವವನ್ನು ಹಿಡಿದುಕೊಳ್ಳುವಂತೆ ತಮಗೋಸ್ಕರ ಸ್ಥಿರವಾದ ಅಸ್ತಿವಾರಕ್ಕಾಗಿ ನಿಕ್ಷೇಪಗಳನ್ನು ಕೂಡಿಸಿಟ್ಟುಕೊಳ್ಳಲಿ.</verse>
				<verse number="20">ತಿಮೊಥೆಯನೇ, ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡು. ದೇವಭಕ್ತಿಗೆ ಅನುಗುಣವಾಗದ ಹರಟೆ ಮಾತುಗಳಿಗೂ ಜ್ಞಾನದಿಂದ ವಿಚಾರಪಡಿಸುವ ಸುಳ್ಳು ತರ್ಕಗಳಿಗೂ ಒಳಪಡದಿರು.</verse>
				<verse number="21">ಕೆಲವರು ಇಂಥವುಗಳಿಗೆ ಒಳಪಟ್ಟು ನಂಬಿಕೆಯಿಂದ ಗುರಿತಪ್ಪಿ ಹೋಗಿದ್ದಾರೆ. ಕೃಪೆಯು ನಿಮ್ಮೊಂದಿಗಿರಲಿ.</verse>
			</chapter>
		</book>
		<book number="55">
			<chapter number="1">
				<verse number="1">ಕ್ರಿಸ್ತ ಯೇಸುವಿನಲ್ಲಿರುವ ಜೀವ ವಾಗ್ದಾನದ ಪ್ರಕಾರ ದೇವರ ಚಿತ್ತದಿಂದ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೆಂಬ ನಾನು,</verse>
				<verse number="2">ನನ್ನ ಪ್ರಿಯ ಪುತ್ರನಾದ ತಿಮೊಥೆಯನಿಗೆ ಬರೆಯುವುದು: ತಂದೆ ದೇವರಿಂದಲೂ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.</verse>
				<verse number="3">ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ನೆನೆಸಿಕೊಳ್ಳುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕರಂತೆ ದೇವರ ಸೇವೆಮಾಡುತ್ತಾ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.</verse>
				<verse number="4">ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು, ನಿನ್ನನ್ನು ನೋಡಿ ಆನಂದಭರಿತನಾಗಬೇಕೆಂದು ಬಹಳವಾಗಿ ಹಂಬಲಿಸುತ್ತೇನೆ.</verse>
				<verse number="5">ನಿನ್ನಲ್ಲಿರುವ ನಿಷ್ಕಪಟವಾದ ನಂಬಿಕೆಯು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನಿಕೆಯಲ್ಲಿಯೂ ಮೊದಲು ಇದ್ದ ನಂಬಿಕೆಯು ಈಗ ನಿನ್ನಲ್ಲಿಯೂ ಇದೆಯೆಂದು ನಾನು ದೃಢವಾಗಿ ನಂಬಿದ್ದೇನೆ.</verse>
				<verse number="6">ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತಗಳನ್ನು ಇಟ್ಟಿದ್ದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.</verse>
				<verse number="7">ದೇವರು ನಮಗೆ ಕೊಟ್ಟಿರುವ ಆತ್ಮವು ಶಕ್ತಿ, ಪ್ರೀತಿ ಹಾಗೂ ಸ್ವಶಿಸ್ತು ಆತ್ಮವೇ ಹೊರತು ಭಯದ ಆತ್ಮವಲ್ಲ.</verse>
				<verse number="8">ಹೀಗಿರುವುದರಿಂದ ನಮ್ಮ ಕರ್ತ ಯೇಸುವಿನ ಸಾಕ್ಷಿಯ ವಿಷಯವಾಗಿಯೂ ಅವರ ಸೆರೆಯವನಾದ ನನ್ನ ವಿಷಯವಾಗಿಯೂ ನೀನು ನಾಚಿಕೆಪಡಬೇಡ. ಅದರ ಬದಲಾಗಿ, ದೇವರ ಶಕ್ತಿಗೆ ಅನುಸಾರವಾಗಿ, ಸುವಾರ್ತೆಗೋಸ್ಕರ ನನ್ನೊಂದಿಗೆ ಶ್ರಮೆಯನ್ನು ಅನುಭವಿಸು.</verse>
				<verse number="9">ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು.</verse>
				<verse number="10">ಆದರೆ ಈಗ ನಮಗೆ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಕೃಪೆ ಪ್ರಕಟವಾಯಿತು. ಕ್ರಿಸ್ತ ಯೇಸು ಮರಣವನ್ನು ನಾಶಮಾಡಿ, ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವವನ್ನೂ ಪ್ರಕಾಶಗೊಳಿಸಿದರು.</verse>
				<verse number="11">ಈ ಸುವಾರ್ತೆಯನ್ನು ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಯೆಹೂದ್ಯರಲ್ಲದವರಿಗೆ ಉಪದೇಶಕನಾಗಿಯೂ ದೇವರಿಂದ ನೇಮಕವಾದೆನು.</verse>
				<verse number="12">ಇದಕ್ಕಾಗಿಯೇ ನಾನು ಈ ಶ್ರಮೆಗಳನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ಏಕೆಂದರೆ ನಾನು ನಂಬಿರುವ ಕ್ರಿಸ್ತ ಯೇಸುವನ್ನು ಬಲ್ಲೆನು. ನಾನು ಕ್ರಿಸ್ತ ಯೇಸುವಿಗೆ ಒಪ್ಪಿಸಿದ್ದನ್ನು ಅವರು ಆ ದಿನಕ್ಕಾಗಿ ಕಾಪಾಡುವುದಕ್ಕೆ ಶಕ್ತರಾಗಿದ್ದಾರೆಂಬ ದೃಢವಿಶ್ವಾಸ ನನಗಿದೆ.</verse>
				<verse number="13">ನೀನು ನನ್ನಿಂದ ಕೇಳಿದ ಸ್ವಸ್ಥವಾಕ್ಯಗಳನ್ನು ಕ್ರಿಸ್ತ ಯೇಸುವಿನಲ್ಲಿರುವ ವಿಶ್ವಾಸ ಹಾಗೂ ಪ್ರೀತಿಯೊಂದಿಗೆ ಒಂದು ಮಾದರಿಯಾಗಿ ಹಿಡಿದುಕೋ.</verse>
				<verse number="14">ನಿನಗೆ ಒಪ್ಪಿಸಲಾಗಿರುವ ಆ ಒಳ್ಳೆಯದನ್ನು ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮ ದೇವರ ಮೂಲಕ ನೀನು ಕಾಪಾಡು.</verse>
				<verse number="15">ಏಷ್ಯ ಸೀಮೆಯಲ್ಲಿ ಫುಗೇಲನೂ ಹರ್ಮೊಗೇನನೂ ಒಳಗೊಂಡು ಎಲ್ಲರೂ ನನ್ನನ್ನು ಬಿಟ್ಟು ಹೋದರೆಂಬುದನ್ನು ನೀನು ಬಲ್ಲೆ.</verse>
				<verse number="16">ಒನೇಸಿಫೊರನ ಮನೆಯವರಿಗೆ ಕರ್ತ ಯೇಸು ಕರುಣೆಯನ್ನು ದಯಪಾಲಿಸಲಿ. ಏಕೆಂದರೆ ಅವನು ಅನೇಕಾವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆ ಪಡಲಿಲ್ಲ.</verse>
				<verse number="17">ಆದರೆ ಅವನು ರೋಮಿನಲ್ಲಿದ್ದಾಗ ಪ್ರಯಾಸದಿಂದ ನನ್ನನ್ನು ಹುಡುಕಿ ಕಂಡುಕೊಂಡನು.</verse>
				<verse number="18">ಅವನು ಆ ದಿನದಲ್ಲಿ ಕರ್ತ ಯೇಸುವಿನಿಂದ ಕರುಣೆಯನ್ನು ಕಂಡುಕೊಳ್ಳುವಂತೆ ಕರ್ತ ಯೇಸುವೇ ಅವನಿಗೆ ಅನುಗ್ರಹ ಮಾಡಲಿ. ಎಫೆಸದಲ್ಲಿ ಅವನು ನನಗೆ ಎಷ್ಟು ಸಹಾಯಮಾಡಿದನೆಂಬುದು ನಿನಗೆ ಚೆನ್ನಾಗಿ ಗೊತ್ತಿದೆ.</verse>
			</chapter>
			<chapter number="2">
				<verse number="1">ಆದ್ದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲಗೊಂಡವನಾಗಿರು.</verse>
				<verse number="2">ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನು ಇತರರಿಗೆ ಸಹ ಬೋಧಿಸಲು ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.</verse>
				<verse number="3">ಆದ್ದರಿಂದ ನೀನು ಕ್ರಿಸ್ತ ಯೇಸುವಿನ ಒಳ್ಳೆಯ ಸೈನಿಕನಂತೆ ನನ್ನೊಂದಿಗೆ ಶ್ರಮೆಯನ್ನು ಅನುಭವಿಸು.</verse>
				<verse number="4">ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡ ನಾಯಕನನ್ನು ಮೆಚ್ಚಿಸಬೇಕೆಂದು ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳಲಾರನು.</verse>
				<verse number="5">ಇದಲ್ಲದೆ ಯಾವನಾದರೂ ಆಟದ ಸ್ವರ್ಧೆಯಲ್ಲಿ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ, ಅವನು ಜಯಶಾಲಿಯ ಕಿರೀಟ ಹೊಂದುವುದಿಲ್ಲ.</verse>
				<verse number="6">ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯದಾಗಿ ಪಾಲುಗಾರನಾಗಿರತಕ್ಕದ್ದು.</verse>
				<verse number="7">ನಾನು ಹೇಳುತ್ತಿರುವುದನ್ನು ಆಲೋಚಿಸು. ಕರ್ತ ಯೇಸುವು ಇವೆಲ್ಲವುಗಳಲ್ಲಿ ನಿನಗೆ ವಿವೇಕವನ್ನು ದಯಪಾಲಿಸುವರು.</verse>
				<verse number="8">ನನ್ನ ಸುವಾರ್ತೆಯ ಸಾರೋಣಕ್ಕೆ ಅನುಸಾರವಾಗಿ ದಾವೀದನ ವಂಶದವರಾದ ಯೇಸು ಕ್ರಿಸ್ತರು ಸತ್ತವರೊಳಗಿಂದ ಎಬ್ಬಿಸಲಾದರೆಂದು ಜ್ಞಾಪಕಮಾಡಿಕೋ.</verse>
				<verse number="9">ಈ ಸುವಾರ್ತೆಗಾಗಿ ನಾನು ಕಷ್ಟವನ್ನು ಅನುಭವಿಸಿ ದುಷ್ಕರ್ಮಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.</verse>
				<verse number="10">ಆದಕಾರಣ ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯ ಮಹಿಮೆ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ಸಹಿಸಿಕೊಳ್ಳುತ್ತೇನೆ.</verse>
				<verse number="11">ಇದು ನಂಬತಕ್ಕ ವಾಕ್ಯವಾಗಿದೆ: ನಾವು ಕ್ರಿಸ್ತ ಯೇಸುವಿನ ಜೊತೆಯಲ್ಲಿ ಸತ್ತಿದ್ದರೆ, ಕ್ರಿಸ್ತ ಯೇಸುವಿನ ಜೊತೆಯಲ್ಲಿ ನಾವು ಸಹ ಜೀವಿಸುವೆವು.</verse>
				<verse number="12">ನಾವು ಸಹಿಸಿಕೊಳ್ಳುವವರಾಗಿದ್ದರೆ ಕ್ರಿಸ್ತ ಯೇಸುವಿನ ಜೊತೆಯಲ್ಲಿ ನಾವು ಸಹ ಆಳುವೆವು. ಅವರನ್ನು ನಿರಾಕರಿಸಿದರೆ ಅವರು ಸಹ ನಮ್ಮನ್ನು ನಿರಾಕರಿಸುವರು.</verse>
				<verse number="13">ನಾವು ಅಪನಂಬಿಗಸ್ತರಾಗಿದ್ದರೂ ಅವರು ನಂಬಿಗಸ್ತರಾಗಿಯೇ ಉಳಿದಿರುವರು. ಅವರು ತಮ್ಮ ಸ್ವಭಾವವನ್ನು ತಾವೇ ನಿರಾಕರಿಸಲಾರರು.</verse>
				<verse number="14">ಈ ವಿಷಯಗಳನ್ನು ದೇವಜನರ ನೆನಪಿಗೆ ತರಬೇಕು. ಕೇಳುವವರಿಗೆ ಯಾವ ಪ್ರಯೋಜನವನ್ನೂ ಉಂಟು ಮಾಡದೆ ಕೆಡವಿ ಹಾಕುವ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ದೇವರ ಮುಂದೆ ಎಚ್ಚರಿಸು.</verse>
				<verse number="15">ನೀನು ನಾಚಿಕೆಗೆ ಒಳಪಡದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಬೋಧಿಸುವವನೂ ಆಗಿರುವಂತೆ ನಿನ್ನನ್ನು ದೇವರಿಗೆ ಮೆಚ್ಚಿಕೆಯಾದವನಾಗಿರಲು ಸಮರ್ಪಿಸಲು ಅತ್ಯಂತ ಆಸಕ್ತನಾಗಿರು.</verse>
				<verse number="16">ಆದರೆ ಭಕ್ತಿಗೆ ವಿರುದ್ಧವಾದ ಹರಟೆ ಮಾತುಗಳಿಂದ ತೊಲಗಿರು. ಅವುಗಳಿಗೆ ಮನಸ್ಸು ಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.</verse>
				<verse number="17">ಅವರ ಬೋಧನೆ ಮಾರಕ ಹುಣ್ಣಿನಂತೆ ಹರಡಿಕೊಳ್ಳುವುದು. ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ.</verse>
				<verse number="18">ಅವರು ಪುನರುತ್ಥಾನವು ಆಗಲೇ ಆಗಿ ಹೋಯಿತೆಂದು ಹೇಳುತ್ತಾ ಸತ್ಯದ ಗುರಿಯನ್ನು ತಪ್ಪಿದವರಾಗಿ ಕೆಲವರ ವಿಶ್ವಾಸವನ್ನು ಕೆಡಿಸಿಬಿಡುವವರಾಗಿದ್ದಾರೆ.</verse>
				<verse number="19">ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.</verse>
				<verse number="20">ದೊಡ್ಡ ಮನೆಯಲ್ಲಿ ಬೆಳ್ಳಿಬಂಗಾರದ ಪಾತ್ರೆಗಳಲ್ಲದೆ ಮರದ ಹಾಗೂ ಮಣ್ಣಿನ ಪಾತ್ರೆಗಳೂ ಇರುತ್ತವೆ. ಕೆಲವು ವಿಶೇಷ ಉದ್ದೇಶಗಳಿಗಾಗಿಯೂ ಕೆಲವು ಸಾಮಾನ್ಯ ಉಪಯೋಗಕ್ಕಾಗಿಯೂ ಇರುತ್ತವೆ.</verse>
				<verse number="21">ಒಬ್ಬನು ತನ್ನನ್ನು ಸಾಮಾನ್ಯ ಘನಹೀನತೆಯಿಂದ ಶುದ್ಧಮಾಡಿಕೊಂಡರೆ, ಅವನು ವಿಶೇಷ ಉದ್ದೇಶಕ್ಕಾಗಿ ಶುದ್ಧೀಕರಗೊಂಡವನೂ ಯಜಮಾನನಿಗೆ ಉಪಯುಕ್ತನೂ ಸಕಲ ಸತ್ಕಾರ್ಯಕ್ಕೆ ಸಿದ್ಧನೂ ಆಗಿರುವ ಗೌರವದ ಪಾತ್ರೆಯಾಗಿರುವನು.</verse>
				<verse number="22">ಯೌವನದ ಆಶೆಗಳನ್ನು ಬಿಟ್ಟು ಓಡಿಹೋಗು. ಶುದ್ಧ ಹೃದಯವುಳ್ಳವರಾಗಿ ಕರ್ತ ಯೇಸುವನ್ನು ಬೇಡಿಕೊಳ್ಳುವವರ ಸಂಗಡ ನೀತಿ, ವಿಶ್ವಾಸ, ಪ್ರೀತಿ, ಸಮಾಧಾನ ಇವುಗಳನ್ನು ಬೆನ್ನಟ್ಟು.</verse>
				<verse number="23">ಬುದ್ಧಿಯಿಲ್ಲದ ಅಯುಕ್ತ ವಾಗ್ವಾದಗಳು ಜಗಳಗಳನ್ನು ಹುಟ್ಟಿಸುತ್ತವೆ ಎಂದು ತಿಳಿದು ಅವುಗಳನ್ನು ನಿರಾಕರಿಸು.</verse>
				<verse number="24">ಕರ್ತ ಯೇಸುವಿನ ದಾಸನು ಜಗಳವಾಡದೆ ಎಲ್ಲರ ವಿಷಯದಲ್ಲಿ ದಯೆಯುಳ್ಳವನೂ ಬೋಧಿಸುವುದರಲ್ಲಿ ಪ್ರವೀಣನೂ ಸಹನೆಯುಳ್ಳವನೂ ಆಗಿರಬೇಕು.</verse>
				<verse number="25">ವಿರೋಧಿಸುವವರ ಮನಸ್ಸನ್ನು ತಾಳ್ಮೆಯಿಂದ ತಿದ್ದುವವನಾಗಿದ್ದರೆ, ದೇವರು ಒಂದು ವೇಳೆ ಅಂಥವರಿಗೆ ಸತ್ಯದ ತಿಳುವಳಿಕೆಗೆ ನಡೆಸುವ ಪಶ್ಚಾತ್ತಾಪವನ್ನು ಕೊಡುವ ನಿರೀಕ್ಷೆ ಇರುವುದು.</verse>
				<verse number="26">ಈ ರೀತಿಯಾಗಿ, ಸೈತಾನನ ಚಿತ್ತವನ್ನು ನೆರವೇರಿಸಲು ಗುಲಾಮರಾಗಿರುವವರು, ಅವನ ಬಲೆಯಿಂದ ಬಿಡುಗಡೆಹೊಂದಿ ಸ್ವಸ್ಥಮನಸ್ಸುಳ್ಳವರಾಗಿ ತಪ್ಪಿಸಿಕೊಳ್ಳುವರು.</verse>
			</chapter>
			<chapter number="3">
				<verse number="1">ಆದರೆ ಕಡೆಯ ದಿವಸಗಳಲ್ಲಿ ಕಷ್ಟಕರವಾದ ಕಾಲಗಳು ಬರುವುವೆಂಬುದನ್ನು ಸಹ ತಿಳಿದುಕೋ.</verse>
				<verse number="2">ಮನುಷ್ಯರು ತಮ್ಮನ್ನು ತಾವೇ ಪ್ರೀತಿಸಿಕೊಳ್ಳುವವರೂ ಹಣದಾಶೆಯುಳ್ಳವರೂ ಬಡಾಯಿ ಕೊಚ್ಚುವವರೂ ಅಹಂಕಾರಿಗಳೂ ದೇವದೂಷಕರೂ ತಂದೆತಾಯಿಗಳಿಗೆ ಅವಿಧೇಯರೂ ಕೃತಜ್ಞತೆಯಿಲ್ಲದವರೂ ಅಶುದ್ಧರೂ</verse>
				<verse number="3">ಮಾನವತ್ವವಿಲ್ಲದವರೂ ಸಮಾಧಾನವಾಗದವರೂ ಚಾಡಿಕೋರರೂ ಸಂಯಮವಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೆಯದನ್ನು ಪ್ರೀತಿಸದವರೂ</verse>
				<verse number="4">ದ್ರೋಹಿಗಳೂ ದುಡುಕುವವರೂ ಉಬ್ಬಿಕೊಂಡವರೂ ದೇವರನ್ನು ಪ್ರೀತಿಸುವುದಕ್ಕಿಂತಲೂ ಭೋಗಗಳನ್ನೇ ಪ್ರೀತಿಸುವವರೂ</verse>
				<verse number="5">ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು. ಇಂಥವರನ್ನು ಬಿಟ್ಟು ಪ್ರತ್ಯೇಕವಾಗಿರು.</verse>
				<verse number="6">ಇಂಥವರು ಮನೆಗಳಲ್ಲಿ ನುಸುಳಿ ಪಾಪಗಳಿಂದ ತುಂಬಿದವರೂ ನಾನಾ ವಿಧವಾದ ಇಚ್ಛೆಗಳಿಂದ ಪ್ರೇರಣೆ ಹೊಂದಿ ಸುಲಭವಾಗಿ ಮೋಸಹೋಗುವ ಸ್ತ್ರೀಯರನ್ನು ವಶಮಾಡಿಕೊಳ್ಳುವರು.</verse>
				<verse number="7">ಇಂಥ ಸ್ತ್ರೀಯರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಜ್ಞಾನಕ್ಕೆ ಬರಲಾರದವರು ಆಗಿರುವರು.</verse>
				<verse number="8">ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ, ಈ ಸುಳ್ಳು ಬೋಧಕರು ಸಹ ಸತ್ಯವನ್ನು ವಿರೋಧಿಸುತ್ತಾರೆ. ಇದಲ್ಲದೆ ಇವರು ಬುದ್ಧಿಗೆಟ್ಟವರೂ ವಿಶ್ವಾಸದ ವಿಷಯದಲ್ಲಿ ಭ್ರಷ್ಠರೂ ಆಗಿ, ತಿರಸ್ಕಾರ ಹೊಂದಿರುತ್ತಾರೆ.</verse>
				<verse number="9">ಆದರೆ ಇವರು ಇನ್ನು ಮುಂದುವರಿಯಲಾರರು. ಯನ್ನ, ಯಂಬ್ರರ ಮೂರ್ಖತನವು ಎಲ್ಲರಿಗೂ ಸ್ಪಷ್ಟವಾಗಿ ತಿಳಿದುಬಂದಂತೆಯೇ, ಇವರದೂ ತಿಳಿದುಬರುವುದು.</verse>
				<verse number="10">ನೀನಾದರೋ ನನ್ನ ಎಲ್ಲಾ ಬೋಧನೆ, ನನ್ನ ನಡತೆ, ನನ್ನ ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ,</verse>
				<verse number="11">ನಾನು ಎಂತೆಂಥ ಹಿಂಸೆಗಳನ್ನು ಸಹಿಸಿಕೊಂಡೆನೆಂಬುದನ್ನೂ ಅಂತಿಯೋಕ್ಯ, ಇಕೋನ್ಯ, ಲುಸ್ತ್ರ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಕಷ್ಟಾನುಭವಗಳನ್ನೂ ನನಗುಂಟಾದ ಎಲ್ಲಾ ಹಿಂಸೆಗಳನ್ನೂ ನೀನು ಪೂರ್ಣವಾಗಿ ತಿಳಿದವನಾಗಿದ್ದೀ. ಆದರೆ ಕರ್ತದೇವರು ನನ್ನನ್ನು ಇವೆಲ್ಲವುಗಳಿಂದ ಬಿಡಿಸಿದರು.</verse>
				<verse number="12">ನಿಜವಾಗಿಯೂ ಕ್ರಿಸ್ತ ಯೇಸುವಿನಲ್ಲಿ ಭಕ್ತಿಯುಳ್ಳವರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.</verse>
				<verse number="13">ಆದರೆ ದುಷ್ಟರೂ ಇತರರಂತೆ ನಟಿಸುವ ವೇಷಧಾರಿಗಳೂ ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ಹೆಚ್ಚಾದ ಕೆಟ್ಟತನಕ್ಕೆ ಸಾಗುವರು.</verse>
				<verse number="14">ನೀನಾದರೋ, ಕಲಿತು ನಿಶ್ಚಯಗೊಂಡವುಗಳಲ್ಲಿ ಮುಂದುವರಿಯುತ್ತಿರು. ನಿನಗೆ ಕಲಿಸಿಕೊಟ್ಟವರು ಯಾರೆಂಬುದು ನಿನಗೆ ತಿಳಿದಿದೆ.</verse>
				<verse number="15">ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸದ ಮೂಲಕ ರಕ್ಷಣೆ ಹೊಂದುವಂತೆ ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಶಕ್ತವಾಗಿರುವ ಪವಿತ್ರ ವೇದಗಳನ್ನು ನೀನು ಚಿಕ್ಕಂದಿನಿಂದಲೂ ತಿಳಿದವನಾಗಿದ್ದೀಯಲ್ಲಾ.</verse>
				<verse number="16">ಪವಿತ್ರ ವೇದಗಳೆಲ್ಲವೂ ದೇವರ ಶ್ವಾಸದಿಂದಲೇ ಉಂಟಾದದ್ದು. ಅದು ಉಪದೇಶಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಯ ಶಿಕ್ಷಣಕ್ಕೂ ಉಪಯುಕ್ತವಾಗಿದೆ.</verse>
				<verse number="17">ಆದ್ದರಿಂದ ದೇವರ ಮನುಷ್ಯನು ಪರಿಪೂರ್ಣನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.</verse>
			</chapter>
			<chapter number="4">
				<verse number="1">ದೇವರ ಮುಂದೆಯೂ ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸಲು ಕರ್ತ ಆಗಿರುವ ಕ್ರಿಸ್ತ ಯೇಸುವಿನ ಮುಂದೆಯೂ ಅವರ ಪ್ರತ್ಯಕ್ಷತೆ ಹಾಗೂ ಅವರ ರಾಜ್ಯದ ಮುಂದೆಯೂ ನಾನು ನಿನಗೆ ಆಜ್ಞಾಪಿಸಿ ಹೇಳುವುದೇನೆಂದರೆ:</verse>
				<verse number="2">ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು.</verse>
				<verse number="3">ಏಕೆಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ. ಆದರೆ ಅವರು ತಮ್ಮ ಕಿವಿಗಳು ಕೇಳಲು ಆಶೆಪಡುವ ಅನೇಕ ಉಪದೇಶಕರನ್ನು ಕೂಡಿಟ್ಟುಕೊಳ್ಳುವರು.</verse>
				<verse number="4">ಅವರು ಸತ್ಯಕ್ಕೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ತಿರುಗಿಕೊಳ್ಳುವರು.</verse>
				<verse number="5">ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು. ಶ್ರಮೆಗಳನ್ನು ತಾಳಿಕೋ. ಸುವಾರ್ತಿಕನ ಕೆಲಸವನ್ನು ಮಾಡು. ನಿನ್ನ ಸೇವೆಯ ಎಲ್ಲಾ ಕರ್ತವ್ಯಗಳನ್ನು ನೆರವೇರಿಸು.</verse>
				<verse number="6">ಏಕೆಂದರೆ ನಾನು ಈಗಲೇ ಪಾನ ಅರ್ಪಣೆಯಾಗಿ ಇದ್ದೇನೆ. ನಾನು ಹೊರಟುಹೋಗಬೇಕಾದ ಸಮಯವು ಹತ್ತಿರ ಬಂದಿದೆ.</verse>
				<verse number="7">ನಾನು ಒಳ್ಳೆಯ ಹೋರಾಟವನ್ನು ಮಾಡಿದ್ದೇನೆ. ನಾನು ಓಟವನ್ನು ಮುಗಿಸಿದ್ದೇನೆ. ನಾನು ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ.</verse>
				<verse number="8">ಈಗ ನನಗೋಸ್ಕರ ನೀತಿಯ ಕಿರೀಟವು ಇಡಲಾಗಿದೆ. ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾದ ಕರ್ತದೇವರು ಆ ದಿನದಲ್ಲಿ ನನಗೆ ಕೊಡುವರು. ನನಗೆ ಮಾತ್ರವಲ್ಲದೆ ಅವರ ಪುನರಾಗಮನಕ್ಕಾಗಿ ಆಸಕ್ತಿಯಿಂದ ಕಾದಿರುವವರೆಲ್ಲರಿಗೂ ಕೊಡುವರು.</verse>
				<verse number="9">ನನ್ನ ಬಳಿಗೆ ಆದಷ್ಟು ಬೇಗನೆ ಬರುವುದಕ್ಕೆ ನೀನು ಪ್ರಯತ್ನ ಮಾಡು.</verse>
				<verse number="10">ಏಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ, ತೀತನು ದಲ್ಮಾತ್ಯಕ್ಕೂ ಹೋದನು.</verse>
				<verse number="11">ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ. ಅವನು ನನ್ನ ಸೇವೆಗಾಗಿ ನನಗೆ ಉಪಯುಕ್ತನಾಗಿದ್ದಾನೆ.</verse>
				<verse number="12">ತುಖಿಕನನ್ನು ನಾನು ಎಫೆಸಕ್ಕೆ ಕಳುಹಿಸಿದೆನು.</verse>
				<verse number="13">ತ್ರೋವದಲ್ಲಿ ನಾನು ಕರ್ಪನ ಬಳಿ ಬಿಟ್ಟುಬಂದ ಮೇಲಂಗಿಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.</verse>
				<verse number="14">ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡು ಮಾಡಿದ್ದಾನೆ. ಕರ್ತದೇವರು ಅವನ ಕೃತ್ಯಗಳಿಗೆ ಅನುಸಾರವಾಗಿ ಅವನಿಗೆ ಪ್ರತಿಫಲವನ್ನು ಕೊಡಲಿ.</verse>
				<verse number="15">ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಿಂದಿರು. ಏಕೆಂದರೆ ಅವನು ನಮ್ಮ ಸಂದೇಶವನ್ನು ಬಹಳವಾಗಿ ವಿರೋಧಿಸಿದನು.</verse>
				<verse number="16">ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರ ಲೆಕ್ಕಕ್ಕೆ ಸೇರಿಸಲಾಗದೆ ಇರಲಿ.</verse>
				<verse number="17">ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು.</verse>
				<verse number="18">ನನ್ನನ್ನು ಪ್ರತಿಯೊಂದು ದುಷ್ಟದಾಳಿಯಿಂದ ಕರ್ತ ಯೇಸು ತಪ್ಪಿಸಿ, ತಮ್ಮ ಪರಲೋಕ ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ತರುವರು. ಯುಗಯುಗಾಂತರಗಳಲ್ಲಿಯೂ ಅವರಿಗೆ ಮಹಿಮೆ. ಆಮೆನ್.</verse>
				<verse number="19">ಪ್ರಿಸ್ಕಳಿಗೂ ಅಕ್ವಿಲನಿಗೂ ಒನೇಸಿಫೊರನ ಮನೆಯವರಿಗೂ ವಂದನೆ.</verse>
				<verse number="20">ಎರಸ್ತನು ಕೊರಿಂಥದಲ್ಲಿ ಉಳಿದುಕೊಂಡಿದ್ದಾನೆ. ಆದರೆ ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ಅವನನ್ನು ನಾನು ಮಿಲೇತದಲ್ಲಿ ಬಿಟ್ಟಿದ್ದೇನೆ.</verse>
				<verse number="21">ನೀನು ಚಳಿಗಾಲಕ್ಕೆ ಮುಂಚೆಯೇ ಆದಷ್ಟು ಬೇಗನೆ ಬರುವುದಕ್ಕೆ ಪ್ರಯತ್ನ ಮಾಡು. ಯುಬೂಲನೂ ಪೊದೆಯನೂ ಲೀನನೂ ಕ್ಲೌದ್ಯಳೂ ಎಲ್ಲಾ ಸಹೋದರರೂ ನಿನಗೆ ವಂದನೆ ಹೇಳುತ್ತಾರೆ.</verse>
				<verse number="22">ಕರ್ತ ಯೇಸು ನಿನ್ನ ಆತ್ಮದೊಂದಿಗೆ ಇರಲಿ. ಕೃಪೆಯು ನಿಮ್ಮೆಲ್ಲರೊಂದಿಗಿರಲಿ.</verse>
			</chapter>
		</book>
		<book number="56">
			<chapter number="1">
				<verse number="1">ದೇವರು ಆಯ್ದುಕೊಂಡವರ ನಂಬಿಕೆಗನುಸಾರವೂ ಭಕ್ತಿಗನುಸಾರವಾದ ಸತ್ಯದ ತಿಳುವಳಿಕೆಗನುಸಾರವೂ ದೇವರ ಸೇವಕನೂ ಕ್ರಿಸ್ತ ಯೇಸುವಿನ ಅಪೊಸ್ತಲನೂ ಆಗಿರುವ ಪೌಲನೆಂಬ ನನಗೆ</verse>
				<verse number="2">ಸುಳ್ಳಾಡದ ದೇವರು, ಕಾಲಾರಂಭಕ್ಕೆ ಮುಂಚೆಯೇ ನಿತ್ಯಜೀವದ ನಿರೀಕ್ಷೆಯನ್ನು ವಾಗ್ದಾನಮಾಡಿದ್ದಾರೆ.</verse>
				<verse number="3">ತಮ್ಮ ವಾಕ್ಯ ಸಾರುವುದರ ಮೂಲಕ ತಕ್ಕ ಕಾಲದಲ್ಲಿ ಪ್ರಕಟಿಸಿ ನಮ್ಮ ರಕ್ಷಕರಾದ ದೇವರ ಆಜ್ಞೆಗನುಸಾರವಾಗಿ ನನಗೆ ಒಪ್ಪಿಸಿದರು.</verse>
				<verse number="4">ನಮ್ಮಲ್ಲಿ ಹುದುವಾಗಿರುವ ವಿಶ್ವಾಸಕ್ಕೆ ಅನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ ಬರೆಯುವುದು: ತಂದೆಯಾದ ದೇವರಿಂದಲೂ ನಮಗೆ ರಕ್ಷಕ ಹಾಗೂ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.</verse>
				<verse number="5">ಕ್ರೇತದ್ವೀಪದಲ್ಲಿ ಪೂರ್ಣಗೊಳಿಸದ ಕಾರ್ಯಗಳನ್ನು ನೀನು ಕ್ರಮಪಡಿಸಿ ನಾನು ನಿನಗೆ ಆಜ್ಞಾಪಿಸಿದ ಪ್ರಕಾರ ಪ್ರತಿಯೊಂದು ಪಟ್ಟಣದಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆನು.</verse>
				<verse number="6">ಸಭೆಯ ಹಿರಿಯನು, ನಿಂದಾರಹಿತನೂ ಪತ್ನಿಗೆ ನಂಬಿಗಸ್ತನೂ ಆಗಿರಬೇಕು. ಅವನ ಮಕ್ಕಳು ವಿಶ್ವಾಸಿಗಳಾಗಿರಬೇಕು. ಅವರು ದುರ್ಮಾಗಿಗಳು ಇಲ್ಲವೆ ತಿರುಗಿ ಬೀಳುವವರೂ ಎಂಬ ಆರೋಪವನ್ನು ಹೊಂದಿರಬಾರದು.</verse>
				<verse number="7">ಏಕೆಂದರೆ ಸಭಾಧ್ಯಕ್ಷನು ದೇವರ ಕಾರ್ಯಭಾರವನ್ನು ಉಳ್ಳವನಾಗಿರುವುದರಿಂದ ನಿಂದಾರಹಿತನಾಗಿರಬೇಕು; ಅವನು ಗರ್ವಿಷ್ಠನೂ ಮುಂಗೋಪಿಯೂ ಮದ್ಯಪಾನ ಮಾಡುವವನೂ ಹೊಡೆದಾಡುವವನೂ ನೀಚಲಾಭವನ್ನು ಆಶಿಸುವವನೂ ಆಗಿರಬಾರದು.</verse>
				<verse number="8">ಆದರೆ, ಅವನು ಅತಿಥಿ ಸತ್ಕಾರ ಮಾಡುವವನೂ ಒಳ್ಳೆಯದನ್ನು ಪ್ರೀತಿಸುವವನೂ ಸ್ವಯಂನಿಯಂತ್ರವುಳ್ಳವನೂ ನ್ಯಾಯವಂತನೂ ಪರಿಶುದ್ಧನೂ ಶಿಸ್ತುಳ್ಳವನಾಗಿರಬೇಕು.</verse>
				<verse number="9">ಇತರರನ್ನು ಸ್ವಸ್ಥಬೋಧನೆಯಿಂದ ಪ್ರೋತ್ಸಾಹಿಸುವುದಕ್ಕೂ ಎದುರಿಸುವವರನ್ನು ಖಂಡಿಸುವಂತೆ ಮಾತನಾಡುವುದಕ್ಕೂ ಶಕ್ತನಾಗಿರಲು ಅವನು ಬೋಧಿಸಿದ ಪ್ರಕಾರ ನಂಬತಕ್ಕ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರಬೇಕು.</verse>
				<verse number="10">ಏಕೆಂದರೆ, ಅನೇಕ ದಂಗೆಕೋರ ಜನರೂ ಬರೀ ಮಾತನಾಡುವವರೂ ಮೋಸಗೊಳಿಸುವವರೂ ಮುಖ್ಯವಾಗಿ ಸುನ್ನತಿಯಾಗಬೇಕೆಂದು ಹೇಳುವ ಗುಂಪಿನವರೂ ಇದ್ದಾರೆ.</verse>
				<verse number="11">ಅವರು ನೀಚಲಾಭವನ್ನು ಹೊಂದುವುದಕ್ಕಾಗಿ ಮಾಡಬಾರದ ಬೋಧನೆಯನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳು ಮಾಡುತ್ತಿದ್ದಾರೆ. ಆದ್ದರಿಂದ ಅವರ ಬಾಯಿಗಳನ್ನು ಮುಚ್ಚಿಸಬೇಕಾಗಿದೆ.</verse>
				<verse number="12">“ಕ್ರೇತದವರು ಯಾವಾಗಲೂ ಸುಳ್ಳುಗಾರರೂ ದುಷ್ಟಮೃಗಗಳಂಥವರೂ ಸೋಮಾರಿಗಳಾದ ಹೊಟ್ಟೆಬಾಕರೂ ಆಗಿದ್ದಾರೆ!” ಎಂದು ಅವರ ಸ್ವಂತ ಪ್ರವಾದಿಗಳಲ್ಲಿ ಒಬ್ಬನು ಹೇಳಿದನು.</verse>
				<verse number="13">ಈ ಸಾಕ್ಷಿಯು ನಿಜವೇ. ಇದರ ದೆಸೆಯಿಂದ ಅವರು ನಂಬಿಕೆಯಲ್ಲಿ ಸ್ವಸ್ಥರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸು.</verse>
				<verse number="14">ಅವರು ಯೆಹೂದ್ಯರ ಕಟ್ಟುಕಥೆಗಳಿಗೂ ಸತ್ಯದಿಂದ ದೂರಮಾಡುವ ಮಾನವರ ಆಜ್ಞೆಗಳಿಗೂ ಲಕ್ಷ್ಯಕೊಡಬಾರದು.</verse>
				<verse number="15">ಶುದ್ಧರಿಗೆ ಎಲ್ಲವೂ ಶುದ್ಧವೇ. ಆದರೆ ಮಲಿನವಾದವರಿಗೂ ಅವಿಶ್ವಾಸಿಗಳಿಗೂ ಯಾವುದೂ ಶುದ್ಧವಲ್ಲ. ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಮಲಿನವಾಗಿವೆ.</verse>
				<verse number="16">ತಾವು ದೇವರನ್ನು ತಿಳಿದವರೆಂದು ಅವರು ವಾದಿಸುತ್ತಾರೆ. ಆದರೆ ತಮ್ಮ ಕೃತ್ಯಗಳಿಂದ ದೇವರನ್ನೇ ಅಲ್ಲಗಳೆಯುವರಾಗಿದ್ದಾರೆ. ಅವರು ಅಸಹ್ಯರೂ ಅವಿಧೇಯರೂ ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೆ ಅಯೋಗ್ಯರಾಗಿದ್ದಾರೆ.</verse>
			</chapter>
			<chapter number="2">
				<verse number="1">ನೀನಾದರೋ ಸ್ವಸ್ಥಬೋಧನೆಗೆ ಅನುಗುಣವಾಗಿ ಉಪದೇಶಿಸು.</verse>
				<verse number="2">ವೃದ್ಧರು ಆತ್ಮ ಸಂಯಮವುಳ್ಳವರೂ ಗೌರವಕ್ಕೆ ಯೋಗ್ಯರೂ ಸ್ವಯಂನಿಯಂತ್ರಿತರೂ ನಂಬಿಕೆ, ಪ್ರೀತಿ, ತಾಳ್ಮೆ ಇವುಗಳಲ್ಲಿ ಬದಲಾಗದವರೂ ಆಗಿರಬೇಕೆಂದು ಉಪದೇಶಿಸು.</verse>
				<verse number="3">ಅದೇ ಪ್ರಕಾರ, ವೃದ್ಧಸ್ತ್ರೀಯರು ನಡತೆಯಲ್ಲಿ ಭಕ್ತಿಗೆ ತಕ್ಕ ಹಾಗೆ ಇರುವವರಾಗಿರಬೇಕು. ಅವರು ಸುಳ್ಳಾಗಿ ದೂರುವವರೂ ಮದ್ಯಾಸಕ್ತರೂ ಆಗಿರದೆ, ಒಳ್ಳೆಯವುಗಳನ್ನು ಬೋಧಿಸುವವರಾಗಿರಬೇಕು ಎಂದು ಅವರಿಗೆ ಉಪದೇಶಿಸು.</verse>
				<verse number="4">ಇದಲ್ಲದೆ ದೇವರ ವಾಕ್ಯವು ದೂಷಣೆಯಾಗದಂತೆ ಯೌವನ ಸ್ತ್ರೀಯರು ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ</verse>
				<verse number="5">ಸ್ವಶಿಸ್ತನ್ನು ಹೊಂದಿದವರೂ ಪತಿವ್ರತೆಯರೂ ಮನೆಯಲ್ಲಿ ಕೆಲಸ ಮಾಡುವವರೂ ದಯೆವುಳ್ಳವರೂ ತಮ್ಮ ಗಂಡಂದಿರಿಗೆ ಅಧೀನರೂ ಆಗಿರಬೇಕೆಂದು ವೃದ್ಧಸ್ತ್ರೀಯರಿಂದ ಕಲಿತುಕೊಳ್ಳಿರಿ.</verse>
				<verse number="6">ಹಾಗೆಯೇ, ಯೌವನಸ್ಥರು ಆತ್ಮ ಸ್ವಶಿಸ್ತನ್ನು ಹೊಂದಿದವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸು.</verse>
				<verse number="7">ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯ ಮಾಡುವುದರಲ್ಲಿ ಆದರ್ಶವಾಗಿ ತೋರಿಸು. ಬೋಧನೆಯಲ್ಲಿ ಪ್ರಾಮಾಣಿಕತೆಯನ್ನೂ ಗಂಭೀರತೆಯನ್ನೂ</verse>
				<verse number="8">ನಿಂದೆಗೆ ಹೊರತಾದ ಸ್ವಸ್ಥ ಮಾತುಗಳನ್ನಾಡುವವನಾಗಿರು. ಇದರಿಂದ ವಿರೋಧಿಸುವವನು ನಿನ್ನ ವಿಷಯದಲ್ಲಿ ಕೆಟ್ಟದ್ದೇನೂ ಹೇಳುವುದಕ್ಕಾಗದೆ ನಾಚಿಕೆ ಪಡುವನು.</verse>
				<verse number="9">ಸೇವಕರು ತಮ್ಮ ಸ್ವಂತ ಯಜಮಾನರಿಗೆ ಅಧೀನರಾಗಿದ್ದು ಎಲ್ಲವುಗಳಲ್ಲಿ ಅವರನ್ನು ಮೆಚ್ಚಿಸುವವರಾಗಿ ಎದುರು ಮಾತನಾಡದೆ,</verse>
				<verse number="10">ಯಾವುದನ್ನೂ ಕದ್ದಿಟ್ಟುಕೊಳ್ಳದೆ, ನಮ್ಮ ರಕ್ಷಕರಾದ ದೇವರ ಉಪದೇಶವನ್ನು ಎಲ್ಲಾ ವಿಷಯಗಳಲ್ಲಿಯೂ ಅಲಂಕರಿಸುವಂತೆ, ಒಳ್ಳೆಯ ನಂಬಿಗಸ್ತರೆಂದು ಎಲ್ಲದರಲ್ಲಿಯೂ ತೋರಿಸಬೇಕೆಂದು ಅವರನ್ನು ಉಪದೇಶಿಸು.</verse>
				<verse number="11">ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನು ತರುವ ದೇವರ ಕೃಪೆಯೂ ಪ್ರತ್ಯಕ್ಷವಾಯಿತು.</verse>
				<verse number="12">ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು, ಈಗಿನ ಲೋಕದಲ್ಲಿ ಸ್ವಶಿಸ್ತನ್ನು ಹೊಂದಿದವವರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂತಲೂ ದೇವರ ಕೃಪೆಯು ನಮಗೆ ಬೋಧಿಸುತ್ತದೆ.</verse>
				<verse number="13">ನಮಗೆ ರಕ್ಷಕರೂ ಮಹಾ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಭಾಗ್ಯಕರವಾದ ಮಹಿಮೆಯ ಪ್ರತ್ಯಕ್ಷತೆಯ ನಿರೀಕ್ಷೆಯನ್ನೂ ಎದುರು ನೋಡುತ್ತಿರಬೇಕೆಂದು ಕೃಪೆಯು ನಮಗೆ ಬೋಧಿಸುತ್ತದೆ.</verse>
				<verse number="14">ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.</verse>
				<verse number="15">ಈ ಕಾರ್ಯಗಳ ವಿಷಯದಲ್ಲಿ, ನೀನು ಉಪದೇಶಿಸುತ್ತಾ ಇರು. ಪ್ರೋತ್ಸಾಹಮಾಡುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.</verse>
			</chapter>
			<chapter number="3">
				<verse number="1">ಆಳುವವರಿಗೂ ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕೆಂತಲೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕೆ ಸಿದ್ಧರಾಗಿರಬೇಕೆಂತಲೂ ಅವರಿಗೆ ಜ್ಞಾಪಕಮಾಡು.</verse>
				<verse number="2">ಯಾರ ವಿಷಯವಾಗಿಯೂ ಕೆಟ್ಟದ್ದನ್ನಾಡದೆ, ಎಲ್ಲರೊಂದಿಗೆ ಸಮಾಧಾನವಾಗಿಯೂ ಇತರರನ್ನು ಅರ್ಥಮಾಡಿಕೊಳ್ಳುವವರಾಗಿಯೂ ಯಾವಾಗಲೂ ನಮ್ರರಾಗಿ ಇರಬೇಕೆಂತಲೂ ಅವರಿಗೆ ಜ್ಞಾಪಕಮಾಡು.</verse>
				<verse number="3">ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸ ಹೋದವರೂ ವಿವಿಧ ಆಶೆಗಳಿಗೂ ಭೋಗಗಳಿಗೂ ದಾಸರಾಗಿದ್ದೆವು. ಕೆಟ್ಟತನ ಹಾಗೂ ಮತ್ಸರಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ದ್ವೇಷಿಸುವವರೂ ಆಗಿದ್ದೆವು.</verse>
				<verse number="4">ಆದರೆ ನಮಗೆ ರಕ್ಷಕರೂ ದೇವರೂ ಆಗಿರುವ ಕ್ರಿಸ್ತ ಯೇಸುವಿನ ದಯೆಯೂ ಪ್ರೀತಿಯೂ ಮನುಷ್ಯರ ಕಡೆಗೆ ಪ್ರತ್ಯಕ್ಷವಾದಾಗ,</verse>
				<verse number="5">ಅವರು ನಮ್ಮನ್ನು ರಕ್ಷಿಸಿದರು. ಹೇಗೆಂದರೆ, ನಾವು ಮಾಡಿದ ಪುಣ್ಯ ಕ್ರಿಯೆಗಳಿಂದಲ್ಲ, ಅವರ ಕರುಣೆಗೆ ಅನುಸಾರವಾಗಿ ಆತ್ಮಿಕವಾಗಿ ಹುಟ್ಟುವಂತೆ ಮಾಡಿ, ನಮ್ಮನ್ನು ತೊಳೆದೂ ಪವಿತ್ರಾತ್ಮ ದೇವರು ನೂತನ ಜೀವನವನ್ನು ಕೊಡುವುದರ ಮೂಲಕವೇ ಅವರು ನಮ್ಮನ್ನು ರಕ್ಷಿಸಿದರು.</verse>
				<verse number="6">ನಮಗೆ ರಕ್ಷಕರಾದ ಕ್ರಿಸ್ತ ಯೇಸುವಿನ ಮೂಲಕ ದೇವರು ಪವಿತ್ರಾತ್ಮ ದೇವರನ್ನು ನಮ್ಮ ಮೇಲೆ ಸಮೃದ್ಧವಾಗಿ ಸುರಿಸಿದರು.</verse>
				<verse number="7">ನಾವು ಅವರ ಕೃಪೆಯಿಂದ ನೀತಿವಂತರೆಂದು ನಿರ್ಣಯ ಹೊಂದಿ, ನಿತ್ಯಜೀವದ ನಿರೀಕ್ಷೆಗೆ ಅನುಸಾರವಾಗಿ ಬಾಧ್ಯರಾಗುವಂತೆ ಮಾಡಿದರು.</verse>
				<verse number="8">ಇದು ನಂಬತಕ್ಕ ಮಾತಾಗಿದೆ. ದೇವರನ್ನು ನಂಬಿದವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಇವುಗಳ ವಿಷಯವಾಗಿ ಪ್ರಾಮುಖ್ಯತೆಯನ್ನು ಕೊಡಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಹಿತಕರವೂ ಪ್ರಯೋಜನಕರವೂ ಆಗಿವೆ.</verse>
				<verse number="9">ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನಿಯಮದ ವಿಷಯವಾಗಿರುವ ವಾಗ್ವಾದಗಳಿಗೂ ದೂರವಾಗಿರು. ಏಕೆಂದರೆ ಅವು ನಿಷ್ಪ್ರಯೋಜನವಾದವುಗಳೂ ವ್ಯರ್ಥವಾದವುಗಳೂ ಆಗಿವೆ.</verse>
				<verse number="10">ಭೇದ ಹುಟ್ಟಿಸುವವರನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು. ಅಂಥವರ ಸಹವಾಸ ಮಾಡದಿರು.</verse>
				<verse number="11">ಅಂಥವರು ಸನ್ಮಾರ್ಗ ತಪ್ಪಿದವರೂ ತಮ್ಮನ್ನು ತಾವೇ ಖಂಡಿಸಿಕೊಳ್ಳುವವರಾಗಿ ಪಾಪಮಾಡುವವರೂ ಆಗಿದ್ದಾರೆಂದು ನಿಶ್ಚಯವಾಗಿ ತಿಳಿದುಕೊ.</verse>
				<verse number="12">ನಾನು ಅರ್ತೆಮನನ್ನಾಗಲಿ, ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದಾಗ ನೀನು ನಿಕೊಪೊಲಿಯಲ್ಲಿ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನ ಮಾಡು. ಅಲ್ಲಿಯೇ ಚಳಿಗಾಲವನ್ನು ಕಳೆಯಬೇಕೆಂದು ನಾನು ತೀರ್ಮಾನಿಸಿದ್ದೇನೆ.</verse>
				<verse number="13">ನಿಯಮ ಪಂಡಿತನಾದ ಜೇನನನ್ನೂ ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಸಾಗಕಳುಹಿಸು. ಅವರಿಗೇನೂ ಕೊರತೆಯಾಗಬಾರದು.</verse>
				<verse number="14">ನಮ್ಮವರು ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೂ ಅಗತ್ಯವಾಗಿರುವ ಕೊರತೆಗಳನ್ನು ನೀಗಿಸುವುದಕ್ಕೂ ಕಲಿತುಕೊಳ್ಳಲಿ. ಆಗ ಅವರು ನಿಷ್ಪಲರಾಗದೇ ಇರುವರು.</verse>
				<verse number="15">ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ವಿಶ್ವಾಸದಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆಗಳನ್ನು ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ!</verse>
			</chapter>
		</book>
		<book number="57">
			<chapter number="1">
				<verse number="1">ಸುವಾರ್ತೆಯನ್ನು ಸಾರಿದ್ದರಿಂದ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ, ನಮಗೆ ಪ್ರಿಯನೂ ಜೊತೆಗೆಲಸದವನೂ ಆಗಿರುವ ಫಿಲೆಮೋನನಿಗೂ</verse>
				<verse number="2">ಸಹೋದರಿ ಅಪ್ಫಿಯಳಿಗೂ ನಮ್ಮ ಸಹ ಸೈನಿಕನಾದ ಅರ್ಖಿಪ್ಪನಿಗೂ ನಿಮ್ಮ ಮನೆಯಲ್ಲಿ ಸೇರುವ ಸಭೆಯವರಿಗೂ ಬರೆಯುವುದೇನೆಂದರೆ:</verse>
				<verse number="3">ನಮ್ಮ ತಂದೆಯಾದ ದೇವರಿಂದಲೂ ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಇರಲಿ.</verse>
				<verse number="4">ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ಜ್ಞಾಪಕಮಾಡಿಕೊಂಡು ನನ್ನ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.</verse>
				<verse number="5">ಏಕೆಂದರೆ, ನಮ್ಮ ಕರ್ತ ಆಗಿರುವ ಯೇಸುವಿನಲ್ಲಿ ನಿನಗಿರುವ ವಿಶ್ವಾಸವನ್ನೂ ಪರಿಶುದ್ಧರೆಲ್ಲರಿಗಾಗಿ ನಿನಗಿರುವ ಪ್ರೀತಿಯನ್ನೂ ಕುರಿತು ನಾನು ಕೇಳಿದ್ದೇನೆ.</verse>
				<verse number="6">ನಿನ್ನ ವಿಶ್ವಾಸದಲ್ಲಿ ಅನ್ಯೋನ್ಯತೆಯು ನಿನ್ನ ಎಲ್ಲಾ ಒಳ್ಳೆಯದರ ಆಳವಾದ ತಿಳುವಳಿಕೆಯನ್ನು ಕ್ರಿಸ್ತ ಯೇಸುವಿಗಾಗಿ ಪರಿಣಾಮಗೊಳಿಸಿ ಹಂಚುವಂತೆ ನಾನು ಪ್ರಾರ್ಥಿಸುತ್ತೇನೆ.</verse>
				<verse number="7">ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಉತ್ತೇಜನವಾದ್ದರಿಂದ, ನಿನ್ನ ಪ್ರೀತಿಯ ನಿಮಿತ್ತ ನನಗೆ ಬಹಳ ಆನಂದವೂ ಆದರಣೆಯೂ ಉಂಟಾದವು.</verse>
				<verse number="8">ಆದಕಾರಣ, ನಾನು ಈಗ ನಿನಗೆ ಏನು ಮಾಡಬೇಕೆಂದು ಆಜ್ಞಾಪಿಸುವುದಕ್ಕೆ ಕ್ರಿಸ್ತ ಯೇಸುವಿನಲ್ಲಿ ನನಗೆ ಬಹು ಧೈರ್ಯವಿದ್ದರೂ</verse>
				<verse number="9">ಹಾಗೆ ಆಜ್ಞಾಪಿಸದೆ, ಈಗ ಕ್ರಿಸ್ತ ಯೇಸುವಿನ ಸೆರೆಯಾಳೂ ಮುದುಕನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.</verse>
				<verse number="10">ನಾನು ಬಂಧಿಯಾಗಿರುವಾಗ ನನ್ನ ಮಗನಂತೆ ಬಂದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಕೇಳಿಕೊಳ್ಳುತ್ತೇನೆ. ಏಕೆಂದರೆ ನಾನು ಸೆರೆಯಲ್ಲಿದ್ದಾಗ ಅವನು ನನಗೆ ಆತ್ಮಿಕ ಮಗನಾದನು.</verse>
				<verse number="11">ಅವನು ಮೊದಲು ನಿನಗೆ ಅಪ್ರಯೋಜಕನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ.</verse>
				<verse number="12">ನನಗೆ ಪ್ರಾಣವಾಗಿರುವ ಅವನನ್ನು ನಿನ್ನ ಬಳಿಗೆ ಹಿಂದಕ್ಕೆ ನಾನು ಕಳುಹಿಸಿ ಕೊಡುತ್ತಿದ್ದೇನೆ.</verse>
				<verse number="13">ಸುವಾರ್ತೆಯ ನಿಮಿತ್ತ ಸೆರೆಯಲ್ಲಿರುವ ನನಗೆ ಉಪಚಾರ ಮಾಡುವಂತೆ ನಿನಗೆ ಬದಲಾಗಿ ಓನೇಸಿಮನನನ್ನು ನನ್ನ ಬಳಿಯಲ್ಲೇ ಉಳಿಸಿಕೊಳ್ಳಲು ಅಪೇಕ್ಷಿಸಿದ್ದೆನು.</verse>
				<verse number="14">ಆದರೆ ನಿನ್ನ ಉಪಚಾರವು ಬಲಾತ್ಕಾರದಿಂದಾಗದೆ, ಮನಃಪೂರ್ವಕವಾಗಿಯೇ ಇರಬೇಕೆಂದು ಯೋಚಿಸಿ, ನಿನ್ನ ಸಮ್ಮತಿಯಿಲ್ಲದೆ ಏನು ಮಾಡುವುದಕ್ಕೂ ನನಗೆ ಇಷ್ಟವಿಲ್ಲ.</verse>
				<verse number="15">ಓನೇಸಿಮನು ಸ್ವಲ್ಪಕಾಲ ನಿನ್ನಿಂದ ಅಗಲಿದ್ದು ಬಹುಶಃ ನೀನು ಅವನನ್ನು ನಿರಂತರವಾಗಿ ಸೇರಿಸಿಕೊಳ್ಳುವುದಕ್ಕಾಗಿಯೇ!</verse>
				<verse number="16">ಇನ್ನು ಮೇಲೆ ಅವನು ದಾಸನಾಗದೆ, ದಾಸನಿಗಿಂತ ಮೇಲಾಗಿ ಪ್ರಿಯ ಸಹೋದರನಂತಾಗಬೇಕು. ಅವನು ವಿಶೇಷವಾಗಿ ನನಗೆ ಬಹು ಪ್ರಿಯನಾಗಿದ್ದಾನೆ. ಆದರೂ ಓನೇಸಿಮನು ನಿನಗೆ ಮಾನವ ರೀತಿಯಲ್ಲಿಯೂ ಕರ್ತ ಯೇಸುವಿನಲ್ಲಿಯೂ ಒಬ್ಬ ಸಹೋದರನಾಗಿ ಇನ್ನು ಎಷ್ಟೋ ಪ್ರಿಯನಾಗಿರಬೇಕಲ್ಲವೇ.</verse>
				<verse number="17">ಆದಕಾರಣ ನಾನು ನಿನಗೆ ಅನ್ಯೋನ್ಯತೆವುಳ್ಳವನೆಂದು ನೀನು ಎಣಿಸುವುದಾದರೆ ನನ್ನನ್ನು ಸ್ವೀಕರಿಸಿಕೊಳ್ಳುವ ಪ್ರಕಾರವೇ ಅವನನ್ನು ಸ್ವೀಕರಿಸು.</verse>
				<verse number="18">ಅವನು ನಿನಗೆ ಏನಾದರೂ ತಪ್ಪು ಮಾಡಿದ್ದರೆ ಅಥವಾ ಅವನು ಸಾಲವೇನಾದರೂ ತೀರಿಸಬೇಕಾಗಿದ್ದರೆ, ಅದನ್ನು ನನ್ನ ಲೆಕ್ಕಕ್ಕೆ ಹಾಕು.</verse>
				<verse number="19">ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ನನ್ನ ಸ್ವಂತ ಕೈಯಲ್ಲಿ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನು ನಿನ್ನ ಪ್ರಾಣವನ್ನೇ ನನಗೆ ಸಾಲಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕಾಗಿಲ್ಲ.</verse>
				<verse number="20">ಸಹೋದರನೇ ಹೌದು, ಕರ್ತ ಯೇಸುವಿನಲ್ಲಿ ನಿನ್ನಿಂದ ನನಗೆ ಈ ಸಹಾಯಮಾಡು; ಅದು ಕ್ರಿಸ್ತ ಯೇಸುವಿನಲ್ಲಿ ನನ್ನ ಹೃದಯವನ್ನು ಉತ್ತೇಜನಗೊಳಿಸಲಿ.</verse>
				<verse number="21">ನಿನ್ನ ವಿಧೇಯತೆಯಲ್ಲಿ ಭರವಸೆಯುಳ್ಳವನಾಗಿ ನಾನು ನಿನಗೆ ಬರೆದಿದ್ದೇನೆ. ನಾನು ಹೇಳಿದ್ದಕ್ಕಿಂತಲೂ ಹೆಚ್ಚಾಗಿಯೇ ನೀನು ಮಾಡುವೆಯೆಂದು ನನಗೆ ಗೊತ್ತಿದೆ.</verse>
				<verse number="22">ಇದಲ್ಲದೆ: ನಿಮ್ಮ ಪ್ರಾರ್ಥನೆಯ ದೆಸೆಯಿಂದ ನಾನು ಪುನಃ ನಿಮ್ಮ ಬಳಿಗೆ ಬರುತ್ತೇನೆಂದು ನನಗೆ ನಿರೀಕ್ಷೆ ಇರುವುದು. ಆದಕಾರಣ ನನಗಾಗಿ ಒಂದು ಅತಿಥಿ ಕೊಠಡಿಯನ್ನು ಸಿದ್ಧಮಾಡು.</verse>
				<verse number="23">ಕ್ರಿಸ್ತ ಯೇಸುವಿಗಾಗಿ ನನ್ನ ಜೊತೆ ಸೆರೆಯಾಳಾಗಿರುವ ಎಪಫ್ರನು ನಿನಗೆ ವಂದನೆ ತಿಳಿಸುತ್ತಾನೆ.</verse>
				<verse number="24">ನನ್ನ ಜೊತೆಕೆಲಸದವರಾದ ಮಾರ್ಕ, ಅರಿಸ್ತಾರ್ಕ, ದೇಮ ಹಾಗೂ ಲೂಕ ನಿನ್ನನ್ನು ವಂದಿಸುತ್ತಾರೆ.</verse>
				<verse number="25">ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯು ನಿಮ್ಮ ಆತ್ಮದೊಂದಿಗೆ ಇರಲಿ.</verse>
			</chapter>
		</book>
		<book number="58">
			<chapter number="1">
				<verse number="1">ಗತಕಾಲದಲ್ಲಿ ನಮ್ಮ ಪಿತೃಗಳ ಸಂಗಡ ವಿವಿಧ ರೀತಿಯಲ್ಲಿಯೂ ಅನೇಕಬಾರಿ ಪ್ರವಾದಿಗಳ ಮುಖಾಂತರವೂ ಮಾತನಾಡಿದ ದೇವರು,</verse>
				<verse number="2">ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮುಖಾಂತರ ಮಾತನಾಡಿದ್ದಾರೆ. ಈ ಕ್ರಿಸ್ತ ಯೇಸುವನ್ನೇ ದೇವರು ಎಲ್ಲಕ್ಕೂ ಬಾಧ್ಯರನ್ನಾಗಿ ನೇಮಿಸಿದರು. ಇವರ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದರು.</verse>
				<verse number="3">ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.</verse>
				<verse number="4">ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ದೇವದೂತರಿಗಿಂತಲೂ ಶ್ರೇಷ್ಠರಾಗಿದ್ದಾರೆ. ಅವರಿಗಿಂತ ಅತಿ ಶ್ರೇಷ್ಠ ಹೆಸರನ್ನು ಬಾಧ್ಯವಾಗಿ ಹೊಂದಿದವರೂ ಆಗಿದ್ದಾರೆ.</verse>
				<verse number="5">ದೇವರು ತಮ್ಮ ದೂತರೊಳಗೆ ಯಾರಿಗಾದರೂ ಹೀಗೆ ಎಂದಾದರೂ ಹೇಳಿದ್ದುಂಟೋ, “ನೀನು ನನ್ನ ಪುತ್ರನು; ಇಂದು ನಾನು ನಿನ್ನ ತಂದೆಯಾಗಿದ್ದೇನೆ!” ಎಂದೂ, “ನಾನು ಆತನ ತಂದೆಯಾಗಿರುವೆನು; ಆತನು ನನಗೆ ಮಗನಾಗಿರುವನು!”</verse>
				<verse number="6">ಇದಲ್ಲದೆ ಮೊದಲು ಹುಟ್ಟಿದವರನ್ನು ದೇವರು ಲೋಕದೊಳಗೆ ಬರಮಾಡುವಾಗ, “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ!” ಎಂದು ಹೇಳಿದ್ದಾರೆ.</verse>
				<verse number="7">ದೂತರ ವಿಷಯದಲ್ಲಿ ದೇವರು ಮಾತನಾಡುವಾಗ, “ಅವರು ತಮ್ಮ ದೂತರನ್ನು ಆತ್ಮಗಳಾಗಿಯೂ ತಮ್ಮ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾರೆ!” ಎಂದು ಹೇಳಿದ್ದಾರೆ.</verse>
				<verse number="8">ತಂದೆ ದೇವರು ತಮ್ಮ ಪುತ್ರ ಆಗಿರುವವರ ವಿಷಯದಲ್ಲಿ ಹೀಗೆ ಹೇಳಿದ್ದಾರೆ: “ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿಮ್ಮ ರಾಜದಂಡವಾಗಿದೆ.</verse>
				<verse number="9">ನೀವು ನೀತಿಯನ್ನು ಪ್ರೀತಿಸಿದ್ದೀರಿ. ಅನೀತಿಯನ್ನು ದ್ವೇಷಿಸಿದ್ದೀರಿ; ಆದ್ದರಿಂದ ದೇವರೇ, ನಿಮ್ಮ ದೇವರು ನಿಮ್ಮನ್ನು ನಿಮ್ಮ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾರೆ!”</verse>
				<verse number="10">ಇದಲ್ಲದೆ ದೇವರು ಹೀಗೆಂದರು: “ಕರ್ತದೇವರೇ, ಆದಿಯಲ್ಲಿ ನೀವು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀರಿ, ಆಕಾಶಗಳು ನಿಮ್ಮ ಕೈಕೆಲಸಗಳಾಗಿವೆ.</verse>
				<verse number="11">ಅವು ನಾಶವಾಗುವವು. ಆದರೆ ನೀವು ಸದಾಕಾಲವೂ ಜೀವಿಸುತ್ತೀರಿ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು.</verse>
				<verse number="12">ಅವುಗಳನ್ನು ಮೇಲಂಗಿಯಂತೆ ಮಡಿಸುತ್ತಿರಿ, ಅವು ವಸ್ತ್ರದಂತೆ ಮಾರ್ಪಡುತ್ತವೆ. ಆದರೆ ನೀವು ಏಕರೀತಿಯಾಗಿದ್ದೀರಿ. ನಿಮ್ಮ ವರ್ಷಗಳು ಮುಗಿದುಹೋಗುವುದಿಲ್ಲ!”</verse>
				<verse number="13">ಆದರೆ ದೇವದೂತರಲ್ಲಿ ಯಾರ ವಿಷಯದಲ್ಲಿಯಾದರೂ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವವರೆಗೂ ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು!” ಎಂಬುದಾಗಿ ದೇವರು ಎಂದಾದರೂ ಹೇಳಿದ್ದುಂಟೇ?</verse>
				<verse number="14">ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?</verse>
			</chapter>
			<chapter number="2">
				<verse number="1">ಆದ್ದರಿಂದ ದಾರಿಬಿಟ್ಟು ಹೋಗದಂತೆ, ನಾವು ಕೇಳಿದ ಸಂಗತಿಗಳಿಗೆ ಹೆಚ್ಚು ಲಕ್ಷ್ಯ ಕೊಡುವವರಾಗಿರಬೇಕು.</verse>
				<verse number="2">ಏಕೆಂದರೆ ದೇವದೂತರ ಮೂಲಕ ಹೇಳಲಾದ ವಾಕ್ಯವೇ ದೃಢಪಡಿಸಲಾಯಿತು. ಆದ್ದರಿಂದ ಆ ವಾಕ್ಯವನ್ನು ಮೀರಿದವರಿಗೂ ಅವಿಧೇಯರಾದವರಿಗೂ ನ್ಯಾಯವಾದ ದಂಡನೆ ಕೊಡಲಾಯಿತು.</verse>
				<verse number="3">ಇಂತಹ ಮಹಾ ರಕ್ಷಣೆಯನ್ನು ನಾವು ಅಲಕ್ಷ್ಯ ಮಾಡಿದರೆ ತಪ್ಪಿಸಿಕೊಳ್ಳುವುದು ಹೇಗೆ? ಈ ರಕ್ಷಣೆಯನ್ನು ನಮಗೆ ಕರ್ತ ಆಗಿರುವ ಯೇಸುವೇ ಮೊದಲು ತಿಳಿಸಿದ್ದಾರೆ. ಅವರಿಂದ ಕೇಳಿಸಿಕೊಂಡವರೂ ನಮಗೆ ಆ ರಕ್ಷಣೆಯನ್ನು ದೃಢಪಡಿಸಿದ್ದಾರೆ.</verse>
				<verse number="4">ದೇವರು ಸಹ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ತಮ್ಮ ಚಿತ್ತಾನುಸಾರವಾಗಿ ದಯಪಾಲಿಸಿದ ಪವಿತ್ರಾತ್ಮರ ವರದಾನಗಳಿಂದಲೂ ಸಾಕ್ಷಿನೀಡಿ ದೃಢಪಡಿಸಿದ್ದಾರೆ.</verse>
				<verse number="5">ನಾವು ಸಾರುತ್ತಿರುವ ಮುಂದಣ ಲೋಕವನ್ನು ದೇವರು ತಮ್ಮ ದೂತರಿಗೆ ಅಧೀನ ಮಾಡಲಿಲ್ಲವಲ್ಲ.</verse>
				<verse number="6">ಆದರೆ ಪವಿತ್ರ ವೇದದ ಒಂದು ಸ್ಥಳದಲ್ಲಿ ಒಬ್ಬನು ಹೀಗೆ ಸಾಕ್ಷಿ ಹೇಳಿದ್ದಾನೆ: “ಮನುಷ್ಯನನ್ನು ನೀನು ನೆನಸುವುದಕ್ಕೆ ಅವನು ಎಷ್ಟು ಮಾತ್ರದವನು? ಮನುಷ್ಯಪುತ್ರನನ್ನು ಲಕ್ಷ್ಯವಿಡುವುದಕ್ಕೆ ಅವನು ಎಷ್ಟರವನು?</verse>
				<verse number="7">ನೀನು ಆತನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದೆಯಲ್ಲಾ? ಮಹಿಮೆಯನ್ನೂ ಮಾನವನ್ನೂ ಆತನಿಗೆ ಕಿರೀಟವನ್ನಾಗಿ ಇಟ್ಟೆ.</verse>
				<verse number="8">ಎಲ್ಲವನ್ನೂ ಆತನ ಪಾದಗಳ ಕೆಳಗೆ ಹಾಕಿ ಆತನಿಗೆ ಅಧೀನ ಮಾಡಿದ್ದೀಯಲ್ಲವೇ?” ಹೀಗೆ ದೇವರು ಎಲ್ಲವನ್ನೂ ಆತನಿಗೆ ಅಧೀನ ಮಾಡಿದರೆಂಬುದರಲ್ಲಿ ಆತನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ ಎಂಬುದು ಸ್ವಷ್ಟವಾಗುತ್ತದೆ. ಆದರೆ ಈಗ ಎಲ್ಲವೂ ಆತನಿಗೆ ಅಧೀನವಾಗಿರುವುದನ್ನು ನಾವು ಇನ್ನೂ ಕಾಣುವದಿಲ್ಲ.</verse>
				<verse number="9">ಆದರೂ ದೇವದೂತರಿಗಿಂತ ಸ್ವಲ್ಪಕಾಲ ಕಡಿಮೆಯಾಗಿ ಮಾಡಲಾದ ಆ ಒಬ್ಬಾತನು ಯೇಸುವೇ. ಈ ಯೇಸು ಬಾಧೆಪಟ್ಟು ಮೃತಪಟ್ಟಿದ್ದರಿಂದಲೇ ಮಹಿಮೆಯನ್ನೂ ಮಾನವನ್ನೂ ಕಿರೀಟವಾಗಿ ಹೊಂದಿದರೆಂದು ಎಂದು ನಾವು ಕಾಣುತ್ತೇವೆ. ದೇವರ ಕೃಪೆಯಿಂದಲೇ ಎಲ್ಲರಿಗೋಸ್ಕರ ಮರಣವನ್ನು ಈ ಯೇಸು ಅನುಭವಿಸಬೇಕಾಗಿತ್ತು.</verse>
				<verse number="10">ದೇವರು ಸಮಸ್ತವನ್ನೂ ತಮಗೋಸ್ಕರವೂ ತಮ್ಮ ಮೂಲಕವೂ ಉಂಟುಮಾಡಿ ಬಹುಮಂದಿ ಮಕ್ಕಳನ್ನು ಮಹಿಮೆಗೆ ತರುವಂತೆ ಅವರ ರಕ್ಷಣಾ ನಾಯಕರಾದ ಕ್ರಿಸ್ತ ಯೇಸುವನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ದೇವರಿಗೆ ಯುಕ್ತವಾಗಿತ್ತು.</verse>
				<verse number="11">ಪವಿತ್ರ ಮಾಡುವ ದೇವರೂ ಪವಿತ್ರರಾದವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಯೇಸು ಅವರನ್ನು ಸಹೋದರರೆಂದು ಕರೆಯುವುದಕ್ಕೆ ನಾಚಿಕೆಪಡದೆ,</verse>
				<verse number="12">ಹೇಳಿದ್ದು, “ನಿಮ್ಮ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು. ಸಭಾ ಮಧ್ಯದಲ್ಲಿ ನಿಮಗೆ ಸ್ತುತಿ ಪದಗಳನ್ನು ಹಾಡುವೆನು.”</verse>
				<verse number="13">ಎಂದೂ ಪುನಃ, “ನಾನು ದೇವರ ಮೇಲೆ ಭರವಸೆ ಇಡುವೆನು.” ಎಂದೂ ಪುನಃ, “ಇಗೋ ನಾನೂ, ದೇವರು ನನಗೆ ದಯಪಾಲಿಸಿರುವ ಮಕ್ಕಳೂ ನನಗಿದ್ದಾರೆ.” ಎಂದು ಹೇಳಿದ್ದಾರೆ.</verse>
				<verse number="14">ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ತಮ್ಮ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ, ಸೈತಾನನನ್ನು ನಾಶಮಾಡುವುದಕ್ಕೂ</verse>
				<verse number="15">ಮರಣ ಭಯದಿಂದ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವುದಕ್ಕೂ ಅವರ ಮಾನವತ್ವದಲ್ಲಿ ಪಾಲುಗಾರರಾದರು.</verse>
				<verse number="16">ಯೇಸು ನಿಜವಾಗಿಯೂ ದೂತರಿಗಾಗಿ ಹಾಗೆ ಮಾಡದೆ ಅಬ್ರಹಾಮನ ಸಂತತಿಯವರಿಗಾಗಿ ಹಾಗೆ ಮಾಡಿದರು.</verse>
				<verse number="17">ಆದ್ದರಿಂದ ಯೇಸು ಎಲ್ಲಾ ವಿಷಯಗಳಲ್ಲಿಯೂ ತಮ್ಮ ಸಹೋದರರಿಗೆ ಸಮಾನವಾಗಬೇಕಾಯಿತು. ಹೀಗೆ ಅವರು ಜನರ ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ದೇವರ ಸೇವೆಯಲ್ಲಿ ಕರುಣೆಯುಳ್ಳ ನಂಬಿಗಸ್ತರಾದ ಮಹಾಯಾಜಕರಾದರು.</verse>
				<verse number="18">ಆದ್ದರಿಂದ ಯೇಸು ತಾವೇ ಶೋಧನೆಗೊಳಗಾಗಿ ಬಾಧೆಯನ್ನು ಅನುಭವಿಸಿರುವುದರಿಂದ, ಶೋಧನೆಗೆ ಒಳಗಾಗುವವರಿಗೆ ಸಹಾಯ ಮಾಡುವುದಕ್ಕೆ ಶಕ್ತರಾಗಿದ್ದಾರೆ.</verse>
			</chapter>
			<chapter number="3">
				<verse number="1">ಆದ್ದರಿಂದ ಪರಿಶುದ್ಧರಾದ ಪ್ರಿಯರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಅರಿಕೆಮಾಡುವ ಅಪೊಸ್ತಲರೂ ಮಹಾಯಾಜಕರೂ ಆಗಿರುವ ಯೇಸುವನ್ನೇ ಆಲೋಚಿಸಿರಿ.</verse>
				<verse number="2">ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದಂತೆಯೇ ಯೇಸು ತಮ್ಮನ್ನು ನೇಮಿಸಿದವರಿಗೆ ನಂಬಿಗಸ್ತರಾಗಿದ್ದಾರೆ.</verse>
				<verse number="3">ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವುದರಿಂದ, ಮೋಶೆಗಿಂತ ಯೇಸು ಹೆಚ್ಚಾದ ಮಹಿಮೆಗೆ ಯೋಗ್ಯರೆಂದು ಎಣಿಸಿಕೊಂಡಿದ್ದಾರೆ.</verse>
				<verse number="4">ಏಕೆಂದರೆ ಪ್ರತಿಯೊಂದು ಮನೆಯೂ ಯಾರೋ ಒಬ್ಬರಿಂದ ಕಟ್ಟಲಾಗುತ್ತದೆ. ಆದರೆ ಸಮಸ್ತವನ್ನು ಕಟ್ಟಿದವರು ದೇವರೇ.</verse>
				<verse number="5">“ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು.” ಅವನು, ಮುಂದೆ ಪ್ರಕಟವಾಗಬೇಕಾಗಿದ್ದ ಒಬ್ಬರಿಗೆ ಸಾಕ್ಷಿಯಾಗಿದ್ದನು.</verse>
				<verse number="6">ಕ್ರಿಸ್ತ ಯೇಸುವಾದರೋ ಮಗನಾಗಿ ದೇವರ ಮನೆಯ ಮೇಲೆ ನಂಬಿಗಸ್ತರಾಗಿದ್ದಾರೆ. ಆದುದರಿಂದ ನಾವು ನಮ್ಮ ಧೈರ್ಯವನ್ನೂ ನಾವು ಹೊಗಳಿಕೊಳ್ಳುವ ನಿರೀಕ್ಷೆಯನ್ನೂ ಕಡೆಯತನಕ ದೃಢವಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.</verse>
				<verse number="7">ಆದ್ದರಿಂದ ಪವಿತ್ರಾತ್ಮ ದೇವರು ಹೇಳುವ ಪ್ರಕಾರ, “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ,</verse>
				<verse number="8">ಅರಣ್ಯದಲ್ಲಿದ್ದಾಗ ನನ್ನನ್ನು ಪರೀಕ್ಷಿಸಿದ ದಿನದಲ್ಲಿ ಕೋಪಕ್ಕೆ ಈಡುಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.</verse>
				<verse number="9">ನಿಮ್ಮ ಪಿತೃಗಳು ನನ್ನನ್ನು ಕೆಣಕಿ ಪರೀಕ್ಷಿಸಿದರು, ನಲವತ್ತು ವರ್ಷ ನನ್ನ ಕಾರ್ಯಗಳನ್ನು ನೋಡಿದರು.</verse>
				<verse number="10">ಆದ್ದರಿಂದ ನಾನು ಆ ಸಂತತಿಯವರ ಮೇಲೆ ಕೋಪಿಸಿಕೊಂಡು, ‘ಅವರು ಯಾವಾಗಲೂ ತಮ್ಮ ಹೃದಯದಲ್ಲಿ ತಪ್ಪಿಹೋಗುತ್ತಾರೆ, ಅವರು ನನ್ನ ಮಾರ್ಗಗಳನ್ನು ತಿಳಿದುಕೊಳ್ಳಲಿಲ್ಲ.’</verse>
				<verse number="11">ಆದ್ದರಿಂದ, ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ!’ ಎಂದು ನಾನು ನನ್ನ ಕೋಪದಲ್ಲಿ ಪ್ರಮಾಣಮಾಡಿದೆನು!”</verse>
				<verse number="12">ಪ್ರಿಯರೇ, ದೇವರನ್ನು ಬಿಟ್ಟುಹೋಗುವ ಅವಿಶ್ವಾಸಯುಳ್ಳ ದುಷ್ಟ ಹೃದಯವು ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಿಂದ ನೋಡಿಕೊಳ್ಳಿರಿ.</verse>
				<verse number="13">ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ, “ಈ ಹೊತ್ತು” ಎಂಬುದು ಇರುವವರೆಗೆ ಪ್ರತಿದಿನವೂ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿರಿ.</verse>
				<verse number="14">ಮೊದಲಿನಿಂದಿರುವ ನಮ್ಮ ನಿರೀಕ್ಷೆಯನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡಿದುಕೊಳ್ಳುವುದಾದರೆ ಕ್ರಿಸ್ತ ಯೇಸುವಿನ ಭಾಗಿಗಳಾಗಿದ್ದೇವಲ್ಲಾ!</verse>
				<verse number="15">ಈಗಲೇ ಹೇಳಿದಂತೆ: “ನೀವು ಈ ಹೊತ್ತು ದೇವರ ಸ್ವರವನ್ನು ಕೇಳಿದರೆ, ತಿರುಗಿಬಿದ್ದಾಗ ನಡೆದಂತೆ ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.”</verse>
				<verse number="16">“ದೇವರು ನುಡಿದದ್ದನ್ನು ಕೇಳಿ ಕೋಪಗೊಂಡು ವಿರೋಧಿಸಿದವರು ಯಾರು? ಆದರೂ ಮೋಶೆಯ ಮೂಲಕ ಈಜಿಪ್ಟಿನಿಂದ ಹೊರಟು ಬಂದವರೆಲ್ಲರೂ ಹಾಗೆ ಮಾಡಲಿಲ್ಲವಲ್ಲಾ?</verse>
				<verse number="17">ನಲವತ್ತು ವರ್ಷ ದೇವರು ಯಾರ ಮೇಲೆ ಕೋಪಗೊಂಡರು? ಪಾಪಮಾಡಿದವರ ಮೇಲೆ ಅಲ್ಲವೇ? ಅವರ ಶವಗಳು ಅರಣ್ಯದಲ್ಲಿ ಬಿದ್ದವಲ್ಲಾ!</verse>
				<verse number="18">ವಿಶ್ರಾಂತಿಯಲ್ಲಿ ಅವರು ಸೇರುವುದೇ ಇಲ್ಲ!” ಎಂದು ಯಾರನ್ನು ಕುರಿತು ಅವರು ಪ್ರಮಾಣ ಮಾಡಿದರು, ಅವಿಧೇಯರಾದವರ ಕುರಿತಲ್ಲವೇ?</verse>
				<verse number="19">ಅವರು ಸೇರಲಾರದೆ ಹೋದದ್ದು ಅವರ ಅವಿಶ್ವಾಸದಿಂದಲೇ ಎಂದು ಕಾಣುತ್ತೇವೆ.</verse>
			</chapter>
			<chapter number="4">
				<verse number="1">ಹೀಗಿರಲಾಗಿ ದೇವರ ವಿಶ್ರಾಂತಿಯಲ್ಲಿ ಸೇರುವೆವು ಎಂಬ ವಾಗ್ದಾನವು ಇನ್ನೂ ಉಳಿದಿರಲು ನಿಮ್ಮಲ್ಲಿ ಯಾರಾದರೂ ಅದನ್ನು ಹೊಂದದೆ ಇರಬಾರದು ಎಂದು ಎಚ್ಚರವಹಿಸೋಣ.</verse>
				<verse number="2">ಇಸ್ರಾಯೇಲರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರಿಹೇಳಲಾಯಿತು. ಆದರೆ ಕೇಳಿದವರು ವಿಧೇಯರಾದವರ ನಂಬಿಕೆಯಲ್ಲಿ ಭಾಗವಹಿಸದೇ ಹೋದದ್ದರಿಂದ, ಸಾರಿದ ವಾಕ್ಯವು ಅವರಿಗೆ ಪ್ರಯೋಜನವಾಗಲಿಲ್ಲ.</verse>
				<verse number="3">ಈಗ ದೇವರು ಹೇಳಿದಂತೆಯೇ ವಿಶ್ವಾಸದಲ್ಲಿರುವ ನಾವು ಆ ವಿಶ್ರಾಂತಿಯಲ್ಲಿ ಪ್ರವೇಶಿಸಿದೆವು, “ ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ’ ಎಂದು ನಾನು ಕೋಪದಿಂದ ಪ್ರಮಾಣಮಾಡಿದೆನು,” ಆದರೂ ದೇವರ ಕೆಲಸವು ಜಗತ್ತಿನ ಸೃಷ್ಟಿಯ ಕಾರ್ಯದಿಂದಲೇ ಮುಗಿದಿದೆ.</verse>
				<verse number="4">ಪವಿತ್ರ ವೇದದ ಯಾವುದೋ ಒಂದು ಸ್ಥಳದಲ್ಲಿ ಏಳನೆಯ ದಿವಸವನ್ನು ಕುರಿತು, “ದೇವರು ತಮ್ಮ ಕಾರ್ಯಗಳನ್ನೆಲ್ಲಾ ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು,” ಎಂತಲೂ,</verse>
				<verse number="5">ಮೇಲಿನ ವಾಕ್ಯಕ್ಕೆ ಸಂಬಂಧಿಸಿ, “ಇವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ,” ಎಂದೂ ದೇವರು ಇನ್ನೊಂದು ಕಡೆ ಹೇಳಿದ್ದಾರೆ.</verse>
				<verse number="6">ಆದ್ದರಿಂದ ಯಾರಿಗೆ ಮೊದಲು ಸುವಾರ್ತೆಯು ಸಾರಲಾಯಿತೋ ಅವರು ಅವಿಧೇಯತೆಯ ನಿಮಿತ್ತ ಆ ವಿಶ್ರಾಂತಿಯಲ್ಲಿ ಸೇರದೆಹೋದರು. ಆದರೂ ಕೆಲವರು ಆ ವಿಶ್ರಾಂತಿಯಲ್ಲಿ ಪ್ರವೇಶಿಸುವ ಅವಕಾಶ ಇನ್ನೂ ಇರುವುದರಿಂದ ಅವರು ಸೇರುವರು.</verse>
				<verse number="7">ದೇವರು “ಈ ಹೊತ್ತೇ” ಎಂದು ಬೇರೊಂದು ದಿವಸವನ್ನು ಗೊತ್ತು ಮಾಡುತ್ತಾರೆ. ಈ ದಿನವನ್ನು ಕುರಿತೇ ಬಹುಕಾಲದ ನಂತರ ದಾವೀದನ ಮೂಲಕ ಮೊದಲೇ ಹೀಗೆ ಹೇಳಿದ್ದಾರೆ: “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.”</verse>
				<verse number="8">ಯೆಹೋಶುವನು ಅವರನ್ನು ಆ ವಿಶ್ರಾಂತಿಯಲ್ಲಿ ಸೇರಿಸಿದ್ದಾದರೆ, ದೇವರು ಬೇರೊಂದು ದಿವಸವನ್ನು ಕುರಿತು ಹೇಳುತ್ತಿರಲಿಲ್ಲವಲ್ಲ.</verse>
				<verse number="9">ಆದ್ದರಿಂದ ದೇವಜನರಿಗೆ ಸಬ್ಬತ್ ಎಂಬ ವಿಶ್ರಾಂತಿಯು ಇನ್ನೂ ಇದೆ.</verse>
				<verse number="10">ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿ ವಿಶ್ರಾಂತಿ ಪಡೆದಂತೆ, ದೇವರ ವಿಶ್ರಾಂತಿಯನ್ನು ಪಡೆದವರು ಸಹ ತಮ್ಮ ಕೆಲಸ ಕಾರ್ಯಗಳನ್ನು ಮುಗಿಸಿ ವಿಶ್ರಾಂತಿ ಪಡೆಯುತ್ತಾರೆ.</verse>
				<verse number="11">ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಿಸೋಣ. ನಮ್ಮಲ್ಲಿ ಯಾರೂ ಆ ಜನರ ಅವಿಧೇಯತೆಯನ್ನು ಅನುಸರಿಸಿ, ನಾಶರಾಗದೇ ಇರೋಣ.</verse>
				<verse number="12">ಯಾಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಕ್ರಿಯಾತ್ಮಕವಾದದ್ದು, ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು, ಪ್ರಾಣ ಮತ್ತು ಆತ್ಮಗಳ ಕೀಲು ಮಜ್ಜೆಗಳನ್ನು ವಿಭಾಗಿಸುವಷ್ಟರ ಮಟ್ಟಿಗೆ ಛೇದಿಸುವಂಥದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸಿ ತೀರ್ಪು ನೀಡುವಂಥದ್ದು ಆಗಿದೆ.</verse>
				<verse number="13">ನಾವು ಲೆಕ್ಕ ಒಪ್ಪಿಸಬೇಕಾಗಿರುವ ದೇವರ ದೃಷ್ಟಿಗೆ ಸಮಸ್ತವೂ ಬಹಿರಂಗವಾದದ್ದಾಗಿಯೂ ಬಯಲಾದದ್ದಾಗಿಯೂ ಆಗಿದೆ. ಎಲ್ಲಾ ಸೃಷ್ಟಿಯಲ್ಲಿ ದೇವರ ದೃಷ್ಟಿಗೆ ಮರೆಯಾದದ್ದು ಯಾವುದೂ ಇಲ್ಲ.</verse>
				<verse number="14">ಆದ್ದರಿಂದ ಪರಲೋಕಗಳನ್ನು ದಾಟಿಹೋದ ದೇವಪುತ್ರ ಯೇಸು ಎಂಬ ಶ್ರೇಷ್ಠ ಮಹಾಯಾಜಕರು ನಮಗಿರುವುದರಿಂದ ನಾವು ಅರಿಕೆಮಾಡುವ ವಿಶ್ವಾಸವನ್ನು ಬಿಗಿಯಾಗಿ ಹಿಡಿಯೋಣ.</verse>
				<verse number="15">ನಮಗಿರುವ ಮಹಾಯಾಜಕ ನಮ್ಮ ಬಲಹೀನತೆಗಳನ್ನು ಕುರಿತು ಅನುಕಂಪಗೊಳ್ಳದೆ ಇರುವವರಲ್ಲ. ಅವರು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದರೂ ಪಾಪ ಮಾತ್ರ ಮಾಡಲಿಲ್ಲ.</verse>
				<verse number="16">ನಾವು ಕರುಣೆಯನ್ನು ಹೊಂದುವಂತೆಯೂ ತಕ್ಕ ಸಮಯದಲ್ಲಿ ಸಹಾಯ ಮಾಡುವ ಕೃಪೆಯನ್ನು ಪಡೆಯುವಂತೆಯೂ ಧೈರ್ಯದಿಂದ ಕೃಪಾಸನದ ಬಳಿಗೆ ಬರೋಣ.</verse>
			</chapter>
			<chapter number="5">
				<verse number="1">ಪ್ರತಿಯೊಬ್ಬ ಮಹಾಯಾಜಕ ಮನುಷ್ಯರೊಳಗಿಂದ ಆರಿಸಲಾಗಿ ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗಾಗಿ ಸಮರ್ಪಿಸಲು ಮನುಷ್ಯರ ಪರವಾಗಿ ದೇವರ ಕಾರ್ಯಗಳಿಗಾಗಿ ನೇಮಿಸಲಾಗುತ್ತಾನಲ್ಲಾ.</verse>
				<verse number="2">ಮಹಾಯಾಜಕನು ತಾನೂ ಬಲಹೀನ ಆಗಿರುವುದರಿಂದ ಆತನು ಅಜ್ಞಾನಿಗಳನ್ನೂ ಮಾರ್ಗ ತಪ್ಪಿದವರನ್ನೂ ಕುರಿತು ಕನಿಕರ ತೋರಿಸಬಲ್ಲನು.</verse>
				<verse number="3">ಆ ಬಲಹೀನತೆಯ ಕಾರಣದಿಂದ ಆತನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಯಜ್ಞಗಳನ್ನು ಅರ್ಪಿಸಬೇಕಾದವನಾಗಿದ್ದಾನೆ.</verse>
				<verse number="4">ಆರೋನನಂತೆ ದೇವರಿಂದ ಕರೆ ಹೊಂದದ ಹೊರತು ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳಲಾರನು.</verse>
				<verse number="5">ಅದೇ ರೀತಿಯಾಗಿ ಕ್ರಿಸ್ತ ಯೇಸು ಮಹಾಯಾಜಕರಾಗುವ ಮಹಿಮೆಯನ್ನು ತಮ್ಮ ಮೇಲೆ ತಾವೇ ತೆಗೆದುಕೊಳ್ಳಲಿಲ್ಲ. ಆದರೆ ದೇವರು, “ನೀನು ನನ್ನ ಪುತ್ರನು, ಇಂದು ನಾನು ನಿನ್ನ ತಂದೆಯಾಗಿದ್ದೇನೆ!” ಎಂದು ಹೇಳಿದರು.</verse>
				<verse number="6">ದೇವರು ಇನ್ನೊಂದು ಸ್ಥಳದಲ್ಲಿ: “ನೀನು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಪ್ರಕಾರವಿರುವ ಯಾಜಕನು!” ಎಂದು ಹೇಳುತ್ತಾರೆ.</verse>
				<verse number="7">ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು.</verse>
				<verse number="8">ಕ್ರಿಸ್ತ ಯೇಸು ದೇವರ ಪುತ್ರರಾಗಿದ್ದರೂ ತಾವು ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡರು.</verse>
				<verse number="9">ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು.</verse>
				<verse number="10">ಯೇಸು ದೇವರಿಂದ ನೇಮಕಗೊಂಡು, ಮೆಲ್ಕಿಜೆದೇಕನ ಕ್ರಮದ ಪ್ರಕಾರ ಮಹಾಯಾಜಕರಾದರು.</verse>
				<verse number="11">ಈ ವಿಷಯದಲ್ಲಿ ನಾವು ಹೇಳಬೇಕಾದದ್ದು ಎಷ್ಟೋ ಇದೆ. ನೀವು ಗ್ರಹಿಸ ಬಯಸದಿರುವುದರಿಂದ ಅದನ್ನೆಲ್ಲಾ ವಿವರಿಸುವುದು ಕಷ್ಟವಾಗಿದೆ.</verse>
				<verse number="12">ನೀವು ಇಷ್ಟರೊಳಗೆ ಬೋಧಕರಾಗಿ ಇರಬೇಕಾಗಿತ್ತು. ಆದರೂ ನಿಮಗೆ ದೇವರ ವಾಕ್ಯಗಳ ಪ್ರಾಥಮಿಕ ಉಪದೇಶಗಳನ್ನೇ ಕಲಿಸಿಕೊಡಬೇಕಾಗಿದೆ. ನಿಮಗೆ ಹಾಲಿನ ಅವಶ್ಯಕತೆಯಿದೆಯೇ ಹೊರತು ಗಟ್ಟಿಯಾದ ಆಹಾರವಲ್ಲ.</verse>
				<verse number="13">ಹಾಲು ಕುಡಿಯುವವರು ಕೂಸಿನಂತಿದ್ದು ನೀತಿ ಬೋಧನೆಯಲ್ಲಿ ಅನುಭವ ಇಲ್ಲದವರಾಗಿದ್ದಾರೆ.</verse>
				<verse number="14">ಆದರೆ ಗಟ್ಟಿಯಾದ ಆಹಾರವು, ತಮ್ಮ ಜ್ಞಾನೇಂದ್ರಿಯಗಳನ್ನು ಅಭ್ಯಾಸಿಸಿ, ತರಬೇತುಗೊಂಡದ್ದರಿಂದ ಒಳ್ಳೆಯದನ್ನು ಹಾಗೂ ಕೆಟ್ಟದ್ದನ್ನು ವಿವೇಚಿಸಿ ಪೂರ್ಣ ಬೆಳವಣಿಗೆ ಹೊಂದಿದವರಿಗೆ ಸೇರಿದ್ದಾಗಿದೆ.</verse>
			</chapter>
			<chapter number="6">
				<verse number="1">ಆದ್ದರಿಂದ ಕ್ರಿಸ್ತ ಯೇಸುವಿನ ವಿಷಯವಾದ ಪ್ರಾಥಮಿಕ ಉಪದೇಶಗಳನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ದೇವರ ಕಡೆಗೆ ತಿರುಗಿಕೊಳ್ಳುವುದೂ ದೇವರಲ್ಲಿ ನಂಬಿಕೆಯಿಡುವುದೂ</verse>
				<verse number="2">ದೀಕ್ಷಾಸ್ನಾನಗಳ ಬೋಧನೆಯೂ ಹಸ್ತಾರ್ಪಣೆಯೂ ಸತ್ತವರ ಪುನರುತ್ಥಾನವೂ ನಿತ್ಯವಾದ ನ್ಯಾಯತೀರ್ಪೂ ಮುಂತಾದವುಗಳನ್ನು ಪುನಃ ಅಸ್ತಿವಾರವನ್ನಾಗಿ ಹಾಕದೆ, ನಾವು ಪರಿಪೂರ್ಣತೆಗೆ ಹೋಗೋಣ.</verse>
				<verse number="3">ದೇವರು ಅನುಮತಿಸಿದರೆ ನಾವು ಇದನ್ನು ಮಾಡೋಣ.</verse>
				<verse number="4">ಒಂದು ಸಾರಿ ಬೆಳಕನ್ನು ಪಡೆದು, ಪರಲೋಕದ ವರವನ್ನು ರುಚಿ ನೋಡಿ, ಪವಿತ್ರಾತ್ಮ ದೇವರ ಪಾಲನ್ನು ಹೊಂದಿ,</verse>
				<verse number="5">ದೇವರ ವಾಕ್ಯದ ಒಳ್ಳೆತನವನ್ನೂ ಬರುವ ಲೋಕದ ಶಕ್ತಿಯನ್ನೂ ರುಚಿ ನೋಡಿದವರು</verse>
				<verse number="6">ಬಿದ್ದುಹೋದರೆ, ಅವರನ್ನು ತಿರುಗಿ ಪಶ್ಚಾತ್ತಾಪಕ್ಕೆ ನಡೆಸುವುದು ಅಸಾಧ್ಯ. ಏಕೆಂದರೆ ಅವರು ತಾವಾಗಿಯೇ ದೇವರ ಪುತ್ರ ಆಗಿರುವವರನ್ನು ಪುನಃ ಶಿಲುಬೆಗೆ ಹಾಕುವವರೂ ಅವರನ್ನು ಬಹಿರಂಗವಾಗಿ ಅವಮಾನ ಪಡಿಸುವವರೂ ಆಗಿರುತ್ತಾರೆ.</verse>
				<verse number="7">ಭೂಮಿಯು ತನ್ನ ಮೇಲೆ ಆಗಾಗ್ಗೆ ಬೀಳುವ ಮಳೆಯನ್ನು ಹೀರಿಕೊಂಡು ಅದು ತನ್ನ ಒಡೆಯನಿಗೆ ಯೋಗ್ಯವಾದ ಬೆಳೆಯನ್ನು ಕೊಡುವುದಾದರೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ.</verse>
				<verse number="8">ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ, ನಿಷ್ಪ್ರಯೋಜಕವಾದದ್ದಾಗಿ ಶಾಪಕ್ಕೆ ಗುರಿಯಾಗಿ, ಕೊನೆಗದು ಬೆಂಕಿಗೆ ತುತ್ತಾಗುತ್ತದೆ.</verse>
				<verse number="9">ಪ್ರಿಯರೇ, ನಾವು ಈ ರೀತಿಯಾಗಿ ಮಾತನಾಡಿದರೂ ನಿಮ್ಮ ವಿಷಯವಾಗಿಯೂ ನೀವು ಉತ್ತಮವಾದವುಗಳನ್ನೂ ರಕ್ಷಣೆಯ ಕಾರ್ಯಗಳನ್ನೂ ಹೊಂದಿದ್ದೀರಿ ಎಂಬ ನಿಶ್ಚಯ ನಮಗಿದೆ.</verse>
				<verse number="10">ಅವರು ನಿಮ್ಮ ಸೇವೆಯನ್ನೂ ನೀವು ಪರಿಶುದ್ಧರಿಗೆ ಸೇವೆಮಾಡಿದ್ದರಲ್ಲಿ ಇನ್ನೂ ಮಾಡುತ್ತಿರುವುದರಲ್ಲಿ ದೇವರ ಹೆಸರಿನ ಕಡೆಗೆ ತೋರಿಸಿದ ಪ್ರೀತಿಯನ್ನೂ ಅವರು ಮರೆಯುವುದಕ್ಕೆ ದೇವರು ಅನ್ಯಾಯಗಾರರಲ್ಲ.</verse>
				<verse number="11">ಅಂತ್ಯದವರೆಗೆ ನೀವು ನಿಮ್ಮ ನಿರೀಕ್ಷೆಯ ಪೂರ್ಣ ನಿಶ್ಚಯವನ್ನು ಗ್ರಹಿಸುವುದಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.</verse>
				<verse number="12">ನೀವು ಸೋಮಾರಿಗಳಾಗಿರಬಾರದು. ವಿಶ್ವಾಸದಿಂದಲೂ ತಾಳ್ಮೆಯಿಂದಲೂ ವಾಗ್ದಾನಗಳನ್ನು ಬಾಧ್ಯವಾಗಿ ಹೊಂದುವವರನ್ನು ಅನುಸರಿಸುವವರಾಗಿರಬೇಕು.</verse>
				<verse number="13">ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತಮಗಿಂತಲೂ ಹೆಚ್ಚು ದೊಡ್ಡವರಾರೂ ಇಲ್ಲದ್ದರಿಂದ ತಮ್ಮ ಮೇಲೆ ಆಣೆಯಿಟ್ಟು,</verse>
				<verse number="14">“ನಿಶ್ಚಯವಾಗಿ ನಾನು ನಿನ್ನನ್ನು ಆಶೀರ್ವದಿಸೇ ಆಶೀರ್ವದಿಸುವೆನು, ನಿನ್ನ ಸಂತಾನವನ್ನು ಹೆಚ್ಚಿಸೇ ಹೆಚ್ಚಿಸುವೆನು,” ಎಂದು ಹೇಳಿದರಷ್ಟೆ.</verse>
				<verse number="15">ಹೀಗೆ ಅಬ್ರಹಾಮನು ತಾಳ್ಮೆಯಿಂದ ಕಾದಿದ್ದು ವಾಗ್ದಾನವನ್ನು ಪಡೆದುಕೊಂಡನು.</verse>
				<verse number="16">ಮನುಷ್ಯರು ನಿಜವಾಗಿಯೂ ದೊಡ್ಡವರ ಮೇಲೆ ಆಣೆ ಇಡುತ್ತಾರಷ್ಟೆ. ಆಣೆಯನ್ನು ದೃಢಪಡಿಸುವುದು ಪ್ರತಿಯೊಂದು ವಿವಾದಕ್ಕೂ ಅಂತ್ಯವಾಗಿರುವುದು.</verse>
				<verse number="17">ದೇವರು ತಮ್ಮ ಮಾರ್ಪಡದ ಉದ್ದೇಶವನ್ನು ವಾಗ್ದಾನದ ಬಾಧ್ಯಸ್ಥರಿಗೆ ಇನ್ನೂ ಹೆಚ್ಚಾಗಿಯೇ ತೋರಿಸಬೇಕೆಂದು ಆಣೆಯಿಟ್ಟು ಸ್ಥಿರಪಡಿಸಿದರು.</verse>
				<verse number="18">ದೇವರ ವಾಗ್ದಾನ ಮತ್ತು ಆಣೆ ಇವೆರಡೂ ಬದಲಾಗದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಸುಳ್ಳಾಡುವವರಲ್ಲ. ಇದರಿಂದಾಗಿ, ದೇವರ ಆಶ್ರಯವನ್ನು ಹೊಂದುವುದಕ್ಕೆ ಓಡಿಬಂದಿರುವ ನಾವು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಳ್ಳಲು ಬಲವಾದ ಉತ್ತೇಜನ ಉಂಟಾಯಿತು.</verse>
				<verse number="19">ಈ ನಿರೀಕ್ಷೆಯು ನಮ್ಮ ಆತ್ಮಕ್ಕೆ ನಿಶ್ಚಯವಾದದ್ದೂ ಸ್ಥಿರವಾದದ್ದೂ ಆಗಿರುವ ಲಂಗರದ ಹಾಗಿದೆ. ಅದು ಅತಿ ಪರಿಶುದ್ಧಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದೂ ಆಗಿದೆ.</verse>
				<verse number="20">ಯೇಸು ಸದಾಕಾಲವೂ ಮೆಲ್ಕಿಜೆದೇಕನ ಕ್ರಮದ ಮಹಾಯಾಜಕರಾಗಿ ಅತಿ ಪರಿಶುದ್ಧ ಸ್ಥಳಕ್ಕೆ ಮುಂದಾಗಿ ಹೋಗಿ ಯೇಸು ನಮ್ಮ ಪರವಾಗಿ ಪ್ರವೇಶಿಸಿದ್ದಾರೆ.</verse>
			</chapter>
			<chapter number="7">
				<verse number="1">ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತರಾದ ದೇವರ ಯಾಜಕನೂ ಆಗಿದ್ದನು. ರಾಜರನ್ನು ಸೋಲಿಸಿ, ಹಿಂದಿರುಗಿ ಬರುತ್ತಿದ್ದ ಅಬ್ರಹಾಮನನ್ನು ಸಂಧಿಸಿ ಅವನನ್ನು ಆಶೀರ್ವದಿಸಿದನು.</verse>
				<verse number="2">ಅಬ್ರಹಾಮನು ಎಲ್ಲವುಗಳಲ್ಲಿ ಅವನಿಗೆ ಹತ್ತರಲ್ಲಿ ಒಂದು ಭಾಗವನ್ನು ಕೊಟ್ಟನು. ಅವನ ಹೆಸರಿಗೆ ಮೊದಲನೆಯದಾಗಿ, “ನೀತಿರಾಜನು” ಎಂದೂ ತರುವಾಯ “ಸಾಲೇಮಿನ ರಾಜ,” ಅಂದರೆ, “ಸಮಾಧಾನದ ಅರಸನು” ಎಂದರ್ಥ.</verse>
				<verse number="3">ಈ ಮೆಲ್ಕಿಜೆದೇಕನಿಗೆ ತಂದೆಯೂ, ತಾಯಿಯೂ, ವಂಶಾವಳಿಯೂ ಇಲ್ಲ. ಅವನ ಜನ್ಮಕ್ಕೆ ಆದಿಯಾಗಲಿ, ಜೀವನಕ್ಕೆ ಅಂತ್ಯವಾಗಲಿ ಇಲ್ಲ. ಅವನು ದೇವರ ಪುತ್ರ ಆಗಿರುವವರಿಗೆ ಹೋಲಿಕೆಯಾಗಿರುವ ನಿತ್ಯ ಯಾಜಕನಾಗಿ ಉಳಿಯುತ್ತಾನೆ.</verse>
				<verse number="4">ಮೆಲ್ಕಿಜೆದೇಕನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ಮೂಲ ಪಿತೃವಾದ ಅಬ್ರಹಾಮನು ಗೆದ್ದು ತಂದವುಗಳಲ್ಲಿ ಹತ್ತರಲ್ಲಿ ಒಂದು ಭಾಗವನ್ನು ಇವನಿಗೇ ಕೊಟ್ಟನಲ್ಲಾ.</verse>
				<verse number="5">ನಿಜವಾಗಿಯೂ ಲೇವಿಯ ಮಕ್ಕಳಲ್ಲಿ ಯಾಜಕೋದ್ಯೋಗವನ್ನು ಹೊಂದುವವರು, ಜನರಿಂದ ಅಂದರೆ ಅಬ್ರಹಾಮನ ವಂಶಸ್ಥರಾಗಿರುವ ತಮ್ಮ ಸಹೋದರರಿಂದಲೇ ದಶಮಭಾಗಗಳನ್ನು ತೆಗೆದುಕೊಳ್ಳುವುದಕ್ಕೆ ಮೋಶೆಯ ನಿಯಮದಲ್ಲಿ ಅಪ್ಪಣೆಯಿದೆ.</verse>
				<verse number="6">ಆದರೆ ವಂಶಾವಳಿಯಲ್ಲಿ ಸೇರದೆ ಇರುವ ಮೆಲ್ಕಿಜೆದೇಕನು ಅಬ್ರಹಾಮನಿಂದ ದಶಮಭಾಗವನ್ನು ತೆಗೆದುಕೊಂಡದ್ದಲ್ಲದೆ, ವಾಗ್ದಾನಗಳನ್ನು ಪಡೆದಿದ್ದ ಅಬ್ರಹಾಮನನ್ನು ಆಶೀರ್ವದಿಸಿದನು.</verse>
				<verse number="7">ಆಶೀರ್ವಾದ ಹೊಂದುವವನಿಗಿಂತ ಆಶೀರ್ವದಿಸುವವನೇ ದೊಡ್ಡವನು ಎಂಬುದರಲ್ಲಿ ವಿವಾದವಿಲ್ಲ.</verse>
				<verse number="8">ಇಲ್ಲಿ ದಶಮಭಾಗಗಳನ್ನು ತೆಗೆದುಕೊಳ್ಳುತ್ತಿರುವ ಲೇವಿಯರು ಕೇವಲ ಮರ್ತ್ಯ ಮಾನವರು. ಆದರೆ ಅಲ್ಲಿ ತೆಗೆದುಕೊಳ್ಳುವ ಮೆಲ್ಕಿಜೆದೇಕನು ಜೀವಿಸುತ್ತಿದ್ದಾನೆಂದು ಸಾಕ್ಷಿ ಹೊಂದಿರುವವನು.</verse>
				<verse number="9">ಇದು ಮಾತ್ರವಲ್ಲದೆ ದಶಮಭಾಗಗಳನ್ನು ತೆಗೆದುಕೊಳ್ಳುವ ಲೇವಿಯೂ ಅಬ್ರಹಾಮನ ಮೂಲಕ ದಶಮಭಾಗಗಳನ್ನು ಕೊಟ್ಟ ಹಾಗಾಯಿತು.</verse>
				<verse number="10">ಹೇಗೆಂದರೆ, ಮೆಲ್ಕಿಜೆದೇಕನು ಅಬ್ರಹಾಮನನ್ನು ಸಂಧಿಸಿದಾಗ, ಲೇವಿಯು ತನ್ನ ಪಿತೃ ಆದ ಅಬ್ರಹಾಮನ ದೇಹದಲ್ಲಿ ಇದ್ದನು ಎಂದು ಪರಿಗಣಿಸಬಹುದು.</verse>
				<verse number="11">ಲೇವಿಯರ ಯಾಜಕತ್ವದ ಆಧಾರದ ಮೇಲೆ ಜನರು ನಿಯಮವನ್ನು ಪಡೆದಿದ್ದರು. ಈ ಯಾಜಕತ್ವದ ಮೂಲಕವೇ ಪರಿಪೂರ್ಣತೆಯು ಉಂಟಾಗಿದ್ದರೆ, ಆರೋನನ ಕ್ರಮಾನುಸಾರವಾಗಿರದೆ ಮೆಲ್ಕಿಜೆದೇಕನ ಕ್ರಮದ ಪ್ರಕಾರ ಬೇರೊಬ್ಬ ಯಾಜಕನು ಎದ್ದೇಳುವ ಅವಶ್ಯವೇನಿತ್ತು?</verse>
				<verse number="12">ಯಾಜಕತ್ವವು ಬದಲಾದಾಗ ನಿಯಮವು ಸಹ ಬದಲಾಗುವುದು ಅಗತ್ಯ.</verse>
				<verse number="13">ಇವು ಯಾರ ವಿಷಯದಲ್ಲಿ ಹೇಳಿದೆಯೋ ಆ ವ್ಯಕ್ತಿ ಬೇರೊಂದು ಗೋತ್ರಕ್ಕೆ ಸೇರಿದವನು. ಆ ಗೋತ್ರದಿಂದ ಎಂದೂ ಯಾರೂ ಬಲಿಪೀಠದ ಬಳಿ ಸೇವೆ ಮಾಡಿದವರಲ್ಲ.</verse>
				<verse number="14">ಹೀಗೆ ನಮ್ಮ ಕರ್ತ ಯೇಸು ಯೂದಾ ಗೋತ್ರಕ್ಕೆ ಸೇರಿದವರೆಂದು ತಿಳಿದ ಸಂಗತಿಯಾಗಿದೆ. ಈ ಗೋತ್ರವನ್ನು ಸಂಬಂಧಿಸಿ ಮೋಶೆಯು ಯಾಜಕರ ವಿಷಯವಾಗಿ ಏನನ್ನೂ ಹೇಳಲಿಲ್ಲ.</verse>
				<verse number="15">ಮೆಲ್ಕಿಜೆದೇಕನಂತೆ ಇನ್ನೊಬ್ಬ ಯಾಜಕನು ಏಳುತ್ತಾನೆಂಬುದು ಇನ್ನೂ ಎಷ್ಟೋ ಹೆಚ್ಚಾಗಿ ಸ್ಪಷ್ಟವಾಗಿದೆ.</verse>
				<verse number="16">ಕ್ರಿಸ್ತ ಯೇಸು ಯಾಜಕರಾದುದು ಅಳಿವಿಲ್ಲದ ಜೀವದ ಶಕ್ತಿಗೆ ಅನುಸಾರವಾಗಿದೆಯೇ ಹೊರತು ನಿಯಮಾನುಸಾರವಾದ ದೈಹಿಕ ಹುಟ್ಟಿನಿಂದಲ್ಲ.</verse>
				<verse number="17">ಕರ್ತ ಯೇಸುವಿನ ವಿಷಯದಲ್ಲಿ, “ನೀನು ಸದಾಕಾಲವೂ, ಮೆಲ್ಕಿಜೆದೇಕನ ಕ್ರಮದ ಯಾಜಕನಾಗಿದ್ದೀ,” ಎಂಬ ಸಾಕ್ಷಿಯಿದೆ.</verse>
				<verse number="18">ಏಕೆಂದರೆ ಮೊದಲಿದ್ದ ಆಜ್ಞೆಯು ನಿರ್ಬಲವೂ ನಿಷ್ಪ್ರಯೋಜಕವೂ ಆಗಿರುವ ಕಾರಣದಿಂದ ಅದು ರದ್ದಾಯಿತು.</verse>
				<verse number="19">ಮೋಶೆಯ ನಿಯಮವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ಒಯ್ಯುವಂತೆ ಹೊಸ ಉತ್ತಮ ನಿರೀಕ್ಷೆಗೆ ನಡಿಸುತ್ತದೆ.</verse>
				<verse number="20">ಇದಂತೂ ಆಣೆಯಿಲ್ಲದೆ ಆಗಿರುವಂಥದ್ದಲ್ಲ! ಲೇವಿಯರು ಆಣೆಯಿಲ್ಲದೆಯೇ ಯಾಜಕರಾದರು,</verse>
				<verse number="21">ಆದರೆ ಯೇಸು ದೇವರ ಆಣೆಯಿಂದಲೇ ಯಾಜಕರಾದರು. ಹೀಗೆ ದೇವರು ಹೇಳಿದ್ದೇನೆಂದರೆ: “ ಕರ್ತ ಆಗಿರುವ ನಾನು ಆಣೆಯಿಟ್ಟು ಹೇಳಿದ್ದೇನೆ. ನಾನು ಎಂದಿಗೂ ಮನಸ್ಸನ್ನು ಬದಲಾಯಿಸುವುದಿಲ್ಲ. ‘ನೀನು ಸದಾಕಾಲವೂ ಯಾಜಕನಾಗಿದ್ದೀ.’ ”</verse>
				<verse number="22">ಇದರಿಂದಲೇ ಯೇಸು ಎಷ್ಟೋ ಉತ್ತಮವಾದ ಒಡಂಬಡಿಕೆಗೆ ಹೊಣೆಗಾರರಾದರು.</verse>
				<verse number="23">ಒಂದು ಕಡೆ ಆ ಯಾಜಕರು ಮುಂದುವರಿಯದಂತೆ ಮರಣವು ಅಡ್ಡಿಯಾದದ್ದರಿಂದ ಅನೇಕರು ಯಾಜಕರಾಗಬೇಕಾಗುತ್ತಿತ್ತು.</verse>
				<verse number="24">ಇನ್ನೊಂದು ಕಡೆ ಯೇಸುವಾದರೋ ಸದಾಕಾಲ ಇರುವುದರಿಂದ ನಿರಂತರವಾಗಿ ತಮ್ಮ ಯಾಜಕತ್ವವನ್ನು ಹೊಂದಿದವರಾಗಿದ್ದಾರೆ.</verse>
				<verse number="25">ಇದಲ್ಲದೆ ಯೇಸು ತಮ್ಮ ಮೂಲಕ ದೇವರ ಕಡೆ ಬರುವವರನ್ನು ಪರಿಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತರಾಗಿದ್ದಾರೆ. ಏಕೆಂದರೆ ಅವರಿಗೋಸ್ಕರ ಯೇಸು ವಿಜ್ಞಾಪನೆ ಮಾಡುವುದಕ್ಕಾಗಿ ಯಾವಾಗಲೂ ಬದುಕುವವರಾಗಿದ್ದಾರೆ.</verse>
				<verse number="26">ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರೂ ಗಗನ ಮಂಡಲಗಳಿಗಿಂತ ಉನ್ನತಕ್ಕೇರಿದಾತರೂ ಆಗಿರುವ ಇಂಥಾ ಮಹಾಯಾಜಕ ನಮಗಿದ್ದಾರೆ.</verse>
				<verse number="27">ಮೊದಲು ತನ್ನ ಸ್ವಂತ ಪಾಪಗಳಿಗಾಗಿಯೂ ಯಜ್ಞಾರ್ಪಣೆ ಮಾಡುವ ಆ ಮಹಾಯಾಜಕರಂತೆ ಯೇಸು ಪ್ರತಿದಿನವೂ ಬಲಿ ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಇವರು ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡಾಗ ಅದನ್ನು ಒಂದೇ ಸಾರಿ ಮಾಡಿ ಮುಗಿಸಿದರು.</verse>
				<verse number="28">ಏಕೆಂದರೆ ಮೋಶೆಯ ನಿಯಮವು ಬಲಹೀನರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಿಸುತ್ತದೆ. ಆದರೆ ಮೋಶೆಯ ನಿಯಮದ ತರುವಾಯ ದೇವರ ಆಣೆಯೊಡನೆ ಬಂದ ವಾಕ್ಯವು ನಿತ್ಯವಾಗಿ ಪರಿಪೂರ್ಣರಾದ ಪುತ್ರನನ್ನೇ ಪ್ರಧಾನಯಾಜಕರನ್ನಾಗಿ ನೇಮಿಸುತ್ತದೆ.</verse>
			</chapter>
			<chapter number="8">
				<verse number="1">ನಾವು ಈಗ ಹೇಳುವ ವಿಷಯಗಳ ಮುಖ್ಯಾಂಶ ಇದು: ಪರಲೋಕದೊಳಗೆ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಕುಳಿತುಕೊಂಡಿರುವಂಥ ಮಹಾಯಾಜಕ ಒಬ್ಬರು ನಮಗಿದ್ದಾರೆ.</verse>
				<verse number="2">ಕ್ರಿಸ್ತ ಯೇಸು ಆಗಿರುವ ಇವರು ಪವಿತ್ರ ಸ್ಥಾನದಲ್ಲಿ ಅಂದರೆ, ಮನುಷ್ಯರಿಂದಲ್ಲ ದೇವರೇ ನಿರ್ಮಿಸಿದ ಪವಿತ್ರ ಸ್ಥಾನದ ನಿಜ ಗುಡಾರದಲ್ಲಿ ಸೇವೆಮಾಡುವವರಾಗಿದ್ದಾರೆ.</verse>
				<verse number="3">ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಯೇಸುವಿಗೆ ಸಹ ಏನಾದರೂ ಇರುವುದು ಅವಶ್ಯವಾಗಿದೆ.</verse>
				<verse number="4">ಯೇಸು ಭೂಮಿಯ ಮೇಲೆ ಇರುವುದಾದರೆ ಯಾಜಕರೇ ಆಗುತ್ತಿರಲಿಲ್ಲ. ಏಕೆಂದರೆ ಮೋಶೆಯ ನಿಯಮದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದಾರಲ್ಲಾ.</verse>
				<verse number="5">ಅವರು ಪರಲೋಕದಲ್ಲಿರುವವುಗಳ ನಿದರ್ಶನವೂ ಛಾಯೆಯೂ ಆಗಿರುವ ಆಲಯಗಳಲ್ಲಿ ಸೇವೆಯನ್ನು ನಡೆಸುವರು. ಇದರಂತೆಯೇ ಮೋಶೆಯು ಗುಡಾರವನ್ನು ಮಾಡುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು,” ಎಂದು ದೇವರಿಂದ ಎಚ್ಚರಿಕೆ ಕೊಡಲಾಗಿತ್ತಲ್ಲವೇ?</verse>
				<verse number="6">ಯೇಸುವಾದರೋ ಈಗ ಅದಕ್ಕಿಂತ ಶ್ರೇಷ್ಠ ಸೇವೆಯನ್ನು ಹೊಂದಿದವರಾಗಿದ್ದಾರೆ. ಅಷ್ಟೇ ಅಲ್ಲದೆ ಇವರು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಒಡಂಬಡಿಕೆಗೆ ಸಹ ಮಧ್ಯಸ್ಥರಾಗಿದ್ದಾರೆ.</verse>
				<verse number="7">ಆ ಮೊದಲನೆಯ ಒಡಂಬಡಿಕೆಯು ತಪ್ಪಿಲ್ಲದ್ದಾಗಿದ್ದರೆ, ಎರಡನೆಯ ಒಡಂಬಡಿಕೆಯ ಅವಶ್ಯಕತೆಯೇ ಇರುತ್ತಿರಲಿಲ್ಲ.</verse>
				<verse number="8">ಆದರೆ ದೇವರು ಜನರಲ್ಲಿ ತಪ್ಪನ್ನು ಕಂಡುಹಿಡಿದು ಹೀಗೆಂದರು, “ಇಗೋ, ನಾನು ಇಸ್ರಾಯೇಲ್ ವಂಶದವರೊಂದಿಗೂ ಯೂದ ವಂಶದವರೊಂದಿಗೂ ಒಂದು ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು.</verse>
				<verse number="9">ಈ ಒಡಂಬಡಿಕೆಯು ನಾನು ಇವರ ಪೂರ್ವಜರನ್ನು ಕೈಹಿಡಿದು, ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ದಿವಸದಂದು ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ. ಏಕೆಂದರೆ ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ. ಆದ್ದರಿಂದ ನಾನು ಅವರನ್ನು ಲಕ್ಷಿಸಲಿಲ್ಲ, ಎಂದು ಕರ್ತದೇವರು ಹೇಳುತ್ತಾರೆ.</verse>
				<verse number="10">ಆ ದಿನಗಳ ತರುವಾಯ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು: ನಾನು ನನ್ನ ನಿಯಮಗಳನ್ನು ಅವರ ಮನಸ್ಸಿನಲ್ಲಿ ಇಡುವೆನು. ನಾನು ಅವರ ಹೃದಯಗಳ ಮೇಲೆ ಅವುಗಳನ್ನು ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.</verse>
				<verse number="11">ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ, ತನ್ನ ಸಹೋದರನಿಗೂ, ‘ಕರ್ತದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ. ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು.</verse>
				<verse number="12">ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು ಮತ್ತು ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ, ಎಂದು ಕರ್ತದೇವರು ನುಡಿಯುತ್ತಾರೆ.”</verse>
				<verse number="13">ಇಲ್ಲಿ ದೇವರು “ಹೊಸ ಒಡಂಬಡಿಕೆ” ಎಂದು ಹೇಳಿರುವಾಗ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿದ್ದಾರೆ. ಅದು ಹಳೆಯದಾಗುತ್ತಾ ಕ್ಷೀಣವಾಗಿ ಅಳಿದು ಹೋಗಲಿದೆ.</verse>
			</chapter>
			<chapter number="9">
				<verse number="1">ಮೊದಲನೆಯ ಒಡಂಬಡಿಕೆಯಲ್ಲಿ ದೈವಿಕ ಆರಾಧನೆಯ ಕ್ರಮಗಳಿದ್ದವು. ಮಾತ್ರವಲ್ಲದೆ ಮಾನವ ನಿರ್ಮಿತ ಪವಿತ್ರ ಸ್ಥಳವೂ ಇತ್ತು.</verse>
				<verse number="2">ಅದರೊಳಗೆ ಒಂದು ಗುಡಾರವು ಕಟ್ಟಲಾಗಿತ್ತು. ಅದರ ಪ್ರಥಮ ಭಾಗದಲ್ಲಿ ದೀಪಸ್ತಂಭ, ಮೇಜು, ಸಮ್ಮುಖದ ರೊಟ್ಟಿ ಇವುಗಳಿದ್ದವು. ಅದು ಪವಿತ್ರ ಸ್ಥಳ ಎಂದು ಕರೆಯಲಾಗಿತ್ತು.</verse>
				<verse number="3">ಎರಡನೆಯ ತೆರೆಯ ಆಚೆ ಅತಿ ಪವಿತ್ರ ಸ್ಥಳ ಎಂದು ಕರೆಯಲಾದ ಗುಡಾರವಿತ್ತು.</verse>
				<verse number="4">ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು. ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಶಿಲಾಶಾಸನಗಳೂ ಇದ್ದವು.</verse>
				<verse number="5">ಮಂಜೂಷದ ಮೇಲೆ ಮಹಿಮೆಯ ಕೆರೂಬಿಯರು ಕರುಣಾಸನವನ್ನು ಮುಚ್ಚಿಕೊಂಡಿದ್ದವು. ಸದ್ಯಕ್ಕೆ ಈ ವಿಷಯಗಳನ್ನು ಸವಿಸ್ತಾರವಾಗಿ ನಾನು ಹೇಳುವುದಕ್ಕಾಗದು.</verse>
				<verse number="6">ಇವುಗಳು ಹೀಗೆ ಸಿದ್ಧವಾದ ಬಳಿಕ ಯಾಜಕರು ಯಾವಾಗಲೂ ಹೊರಗಿನ ಗುಡಾರವನ್ನು ಪ್ರವೇಶಿಸಿ ದೈವಿಕ ಆರಾಧನೆಯನ್ನು ನಡೆಸುತ್ತಿದ್ದರು.</verse>
				<verse number="7">ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೆ ಒಂದೇ ಸಾರಿ ಪ್ರವೇಶಿಸುತ್ತಿದ್ದನು. ಅವನು ರಕ್ತವನ್ನು ತೆಗೆದುಕೊಳ್ಳದೆ ಎಂದಿಗೂ ಹೋಗುತ್ತಿರಲಿಲ್ಲ. ಬಲಿಯ ರಕ್ತವನ್ನು ತನಗೋಸ್ಕರವೂ ಜನರು ತಿಳಿಯದೆ ಮಾಡಿದ ಪಾಪಗಳಿಗೋಸ್ಕರವೂ ಸಮರ್ಪಿಸುತ್ತಿದ್ದನು.</verse>
				<verse number="8">ಹೊರಗಿನ ಗುಡಾರವು ಇನ್ನೂ ಇರುವ ತನಕ ಅತಿ ಪವಿತ್ರ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಲಿಲ್ಲವೆಂಬುದನ್ನು ಪವಿತ್ರಾತ್ಮ ದೇವರು ವ್ಯಕ್ತಪಡಿಸುತ್ತಾರೆ</verse>
				<verse number="9">ಈ ಗುಡಾರವು ಈ ಕಾಲವನ್ನು ಸೂಚಿಸುವ ಒಂದು ಮಾದರಿಯಾಗಿದೆ. ಆಗ ಆರಾಧಿಸುವವರ ಮನಸ್ಸಾಕ್ಷಿಯನ್ನು ಪರಿಪೂರ್ಣ ಮಾಡಲಾರದ ಕಾಣಿಕೆಗಳೂ ಯಜ್ಞಗಳೂ ಅರ್ಪಿಸಲಾಗುತ್ತಿದ್ದವು.</verse>
				<verse number="10">ಅವು ಅನ್ನಪಾನಾದಿಗಳಲ್ಲಿಯೂ ವಿವಿಧ ಸ್ನಾನಗಳಲ್ಲಿಯೂ ಮುಂತಾದ ಬಾಹ್ಯಾಚಾರದ ಕ್ರಮಗಳಾಗಿದ್ದವು. ಅವು ಹೊಸ ಕ್ರಮಕಾಲದವರೆಗೆ ಮಾತ್ರ ನೇಮಕವಾಗಿದ್ದವು.</verse>
				<verse number="11">ಆದರೆ ಕ್ರಿಸ್ತ ಯೇಸು ಈಗಾಗಲೇ ಮಹಾಯಾಜಕರಾಗಿ ಬಂದಿದ್ದಾರೆ. ಅವರು ಕೊಡುವ ಒಳ್ಳೆಯವುಗಳು ಈಗಾಗಲೇ ನಮಗೆ ದೊರೆತಿವೆ. ಅವರು ಹಿಂದಿನವುಗಳಿಗಿಂತಲೂ ಶ್ರೇಷ್ಠವಾದದ್ದೂ ಪರಿಪೂರ್ಣವಾದದ್ದೂ ಆಗಿರುವ ಗುಡಾರವನ್ನು ಅಂದರೆ ಕೈಯಿಂದ ಕಟ್ಟಿರದಂತದ್ದೂ ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿರದಂತದ್ದೂ ಆಗಿರುವ ಗುಡಾರವನ್ನು ಪ್ರವೇಶಿಸಿದರು.</verse>
				<verse number="12">ಕ್ರಿಸ್ತ ಯೇಸು ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವರಾಗಿ ಒಂದೇ ಸಾರಿ ಮಹಾ ಪವಿತ್ರ ಸ್ಥಳದೊಳಗೆ ಪ್ರವೇಶಿಸಿದರು.</verse>
				<verse number="13">ಹೋತ ಹೋರಿಗಳ ರಕ್ತವನ್ನೂ ಅಶುದ್ಧರಾದವರ ಮೇಲೆ ಚಿಮುಕಿಸಲಾಯಿತು. ಯಜ್ಞಪಶುಗಳ ಬೂದಿಯನ್ನೂ ಅವರ ಮೇಲೆ ತೂರಲಾಯಿತು. ಇದು ಅವರ ದೇಹವನ್ನು ಶುದ್ಧೀಕರಿಸಿತು.</verse>
				<verse number="14">ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?</verse>
				<verse number="15">ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.</verse>
				<verse number="16">ಮರಣ ಶಾಸನವು ಎಲ್ಲಿದೆಯೋ ಅಲ್ಲಿ ಅದನ್ನು ಮಾಡಿಕೊಂಡಾತನ ಮರಣ ಅವಶ್ಯ ಎಂಬುದನ್ನು ರುಜುಪಡಿಸಬೇಕು.</verse>
				<verse number="17">ಮರಣ ಶಾಸನವು ಬರೆದವನು ಜೀವದಿಂದಿರುವವರೆಗೂ ಅದು ಎಂದಿಗೂ ಜಾರಿಗೆ ಬರುವುದಿಲ್ಲ.</verse>
				<verse number="18">ಆದ್ದರಿಂದ ಮೊದಲನೆಯ ಒಡಂಬಡಿಕೆಯು ಸಹ ರಕ್ತವಿಲ್ಲದೆ ಪ್ರತಿಷ್ಠಾಪನೆ ಆಗಲಿಲ್ಲ.</verse>
				<verse number="19">ಮೋಶೆಯು ಪ್ರತಿಯೊಂದು ಆಜ್ಞೆಯನ್ನು ನಿಯಮದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪು ಇವುಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಚಿಮುಕಿಸಿದನು.</verse>
				<verse number="20">ಹಾಗೆ ಚಿಮುಕಿಸುವಾಗ ಮೋಶೆಯು, “ಇದು ದೇವರು ನಿಮಗೆ ಆಜ್ಞಾಪಿಸಿದ ಒಡಂಬಡಿಕೆಯ ರಕ್ತ,” ಎಂದು ಹೇಳಿದನು.</verse>
				<verse number="21">ಅದೇ ರೀತಿಯಾಗಿ ಮೋಶೆಯು ಗುಡಾರದ ಮೇಲೆಯೂ ಸೇವೆಯ ಎಲ್ಲಾ ಉಪ ಪಾತ್ರೆಗಳ ಮೇಲೆಯೂ ರಕ್ತವನ್ನು ಚಿಮುಕಿಸಿದನು.</verse>
				<verse number="22">ಹೀಗೆ ದೇವರ ನಿಯಮದ ಪ್ರಕಾರ ಎಲ್ಲವೂ ರಕ್ತದಿಂದಲೇ ಶುದ್ಧಿಯಾಗಬೇಕು. ರಕ್ತಧಾರೆ ಇಲ್ಲದೆ ಪಾಪಪರಿಹಾರವು ಉಂಟಾಗುವುದಿಲ್ಲ.</verse>
				<verse number="23">ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತೆ ಇರುವ ವಸ್ತುಗಳನ್ನು ಈ ಯಜ್ಞಗಳಿಂದ ಶುದ್ಧಿಮಾಡುವುದು ಅವಶ್ಯವಾಗಿದೆ. ಹಾಗಾದರೆ ಪರಲೋಕದ ನಿಜ ವಸ್ತುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯಕವಾಗಿವೆ.</verse>
				<verse number="24">ಏಕೆಂದರೆ ಕ್ರಿಸ್ತ ಯೇಸು ನಿಜ ದೇವಾಲಯದ ಪ್ರತಿರೂಪದಂತಿರುವ, ಕೈಯಿಂದ ಕಟ್ಟಿದ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವಂತೆ ಪರಲೋಕದಲ್ಲಿಯೇ ಪ್ರವೇಶಿಸಿದರು.</verse>
				<verse number="25">ಇದಲ್ಲದೆ ಮಹಾಯಾಜಕನು ಪ್ರತಿವರ್ಷವೂ ತನ್ನ ಸ್ವಂತದ್ದಾಗಿರದ ರಕ್ತವನ್ನು ತೆಗದುಕೊಂಡು ಅತಿ ಪವಿತ್ರ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ ಯೇಸು ತಮ್ಮನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಪ್ರವೇಶಿಸಲಿಲ್ಲ.</verse>
				<verse number="26">ಹಾಗಿದ್ದರೆ, ಕ್ರಿಸ್ತ ಯೇಸುವು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಈಗ ಅವರು ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪ ನಿವಾರಣೆ ಮಾಡುವುದಕ್ಕೆ ತಮ್ಮನ್ನು ತಾವೇ ಯಜ್ಞ ಮಾಡಿಕೊಳ್ಳುವವರಾಗಿ ಪ್ರತ್ಯಕ್ಷರಾದರು.</verse>
				<verse number="27">ಒಂದೇ ಸಾರಿ ಸಾಯುವುದೂ ತರುವಾಯ ನ್ಯಾಯತೀರ್ಪು ಪಡೆಯುವುದೂ ಮನುಷ್ಯರಿಗಾಗಿ ನೇಮಕವಾಗಿದೆ.</verse>
				<verse number="28">ಅದರಂತೆಯೇ ಕ್ರಿಸ್ತ ಯೇಸು ಬಹುಜನರ ಪಾಪಗಳನ್ನು ಹೊತ್ತುಕೊಳ್ಳುವುದಕ್ಕೋಸ್ಕರ ಒಂದೇ ಸಾರಿ ಸಮರ್ಪಿತರಾದರು. ತಮಗಾಗಿ ಕಾದಿರುವವರಿಗೆ ರಕ್ಷಣೆ ಕೊಡಲು ಕ್ರಿಸ್ತ ಯೇಸು ಎರಡನೆಯ ಸಲ ಕಾಣಿಸಿಕೊಳ್ಳುವರು. ಆಗ ಪಾಪ ಹೊತ್ತುಕೊಳ್ಳುವುದಕ್ಕಾಗಿ ಬರುವುದಿಲ್ಲ.</verse>
			</chapter>
			<chapter number="10">
				<verse number="1">ಮೋಶೆಯ ನಿಯಮವು ಬರಬೇಕಾಗಿದ್ದ ವಸ್ತುಗಳ ಛಾಯೆಯಾಗಿದೆ ಹೊರತು ಅವುಗಳ ನಿಜಸ್ವರೂಪವಲ್ಲ. ಈ ಕಾರಣದಿಂದ ಅದು ಪ್ರತಿವರ್ಷ ಯಾವಾಗಲೂ ಯಜ್ಞಗಳನ್ನು ಅರ್ಪಿಸುವುದಕ್ಕೆ ಬರುವವರನ್ನು ಮೋಶೆಯ ನಿಯಮವು ಎಂದಿಗೂ ಪರಿಪೂರ್ಣತೆಗೆ ತರಲಾರದು.</verse>
				<verse number="2">ಒಂದು ವೇಳೆ ತಂದಿದ್ದ ಪಕ್ಷದಲ್ಲಿ ಆ ಯಜ್ಞಗಳ ಸಮರ್ಪಣೆಯು ನಿಂತು ಹೋಗುತ್ತಿತ್ತಲ್ಲಾ. ಏಕೆಂದರೆ ಆರಾಧನೆ ಮಾಡುವವರು ಒಂದು ಸಾರಿ ಪಾಪದಿಂದ ಶುದ್ಧೀಕರಣ ಹೊಂದಿದ ಮೇಲೆ ಅವರಿಗೆ ಎಂದಿಗೂ ಪಾಪಗಳ ಮನಸ್ಸಾಕ್ಷಿ ಇರುತ್ತಿರಲಿಲ್ಲ.</verse>
				<verse number="3">ಆ ಯಜ್ಞಗಳು ಪ್ರತಿವರ್ಷವೂ ಪಾಪಗಳ ಜ್ಞಾಪಕವನ್ನು ಉಂಟುಮಾಡುತ್ತಿತ್ತು.</verse>
				<verse number="4">ಏಕೆಂದರೆ ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದುಹಾಕುವುದು ಅಸಾಧ್ಯ.</verse>
				<verse number="5">ಆದ್ದರಿಂದ ಕ್ರಿಸ್ತ ಯೇಸು ಭೂಲೋಕದೊಳಗೆ ಬಂದಾಗ, “ಯಜ್ಞ ಮತ್ತು ಅರ್ಪಣೆಯನ್ನು ನೀವು ಇಷ್ಟಪಡಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿ ಕೊಟ್ಟಿರುವೆ;</verse>
				<verse number="6">ದಹನಬಲಿಗಳಲ್ಲಿಯೂ ಪಾಪಪರಿಹಾರ ಬಲಿಗಳಲ್ಲಿಯೂ ನೀನು ಸಂತೋಷಪಡುವುದಿಲ್ಲ.</verse>
				<verse number="7">ಆಗ ನಾನು ಹೀಗೆಂದೆನು, ‘ಓ, ದೇವರೇ, ಪವಿತ್ರ ವೇದದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದಿರುವಂತೆ ನಾನು ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ.’ ”</verse>
				<verse number="8">ಮೋಶೆಯ ನಿಯಮದ ಪ್ರಕಾರವಾಗಿ ಅರ್ಪಿಸಲಾಗುತ್ತಿದ್ದಂತೆಯೇ, “ಯಜ್ಞವೂ ಅರ್ಪಣೆಯೂ ದಹನಬಲಿಗಳೂ ಪಾಪ ಪರಿಹಾರದ ಬಲಿಯೂ ನಿಮಗೆ ಇಷ್ಟವಾಗಿರಲಿಲ್ಲ. ಅವುಗಳಲ್ಲಿ ನಿಮಗೆ ಸಂತೋಷವಿರಲಿಲ್ಲ,” ಎಂದು ಮೊದಲು ಅವರು ಹೇಳಿ,</verse>
				<verse number="9">ತರುವಾಯ, “ಇಗೋ, ದೇವರೇ, ನಿಮ್ಮ ಚಿತ್ತವನ್ನು ನೆರವೇರಿಸಲು ಬಂದಿದ್ದೇನೆ!” ಎಂದು ಹೇಳಿದ್ದಾರೆ. ಹೀಗೆ ಅವರು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ರದ್ದು ಮಾಡಿದ್ದಾರೆ.</verse>
				<verse number="10">ಹೀಗೆ ಒಂದೇ ಸಾರಿ ಎಲ್ಲಾ ಕಾಲಕ್ಕೂ ಕ್ರಿಸ್ತ ಯೇಸು ತಮ್ಮ ದೇಹವನ್ನು ಸಮರ್ಪಿಸಿದ್ದರ ಮೂಲಕ ದೇವರ ಚಿತ್ತವನ್ನು ನೆರವೇರಿಸಿ, ನಮ್ಮನ್ನು ಶುದ್ಧರನ್ನಾಗಿ ಮಾಡಿದ್ದಾರೆ.</verse>
				<verse number="11">ಇದಲ್ಲದೆ ಪ್ರತಿ ಯಾಜಕನು ಅನುದಿನವೂ ಸೇವೆಮಾಡುತ್ತಾ ನಿಂತಿರುವನು. ಆದರೆ ಎಂದಿಗೂ ಪಾಪಗಳನ್ನು ತೆಗೆದುಹಾಕಲಾರದಂಥ ಯಜ್ಞಗಳನ್ನು ಪದೇಪದೇ ಅರ್ಪಿಸುತ್ತಿದ್ದನು.</verse>
				<verse number="12">ಕ್ರಿಸ್ತ ಯೇಸುವು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲಗಡೆಯಲ್ಲಿ ಕುಳಿತುಕೊಂಡರು.</verse>
				<verse number="13">ಅಂದಿನಿಂದ ತಮ್ಮ ವಿರೋಧಿಗಳನ್ನು ತಮ್ಮ ಪಾದಪೀಠವಾಗಿ ಮಾಡಿಕೊಳ್ಳುವ ತನಕ ಕ್ರಿಸ್ತ ಯೇಸು ಕಾಯುತ್ತಿರುವರು.</verse>
				<verse number="14">ಏಕೆಂದರೆ ಕ್ರಿಸ್ತ ಯೇಸುವು ಒಂದೇ ಬಲಿ ಅರ್ಪಣೆಯಿಂದ ಪವಿತ್ರವಾಗುವವರನ್ನು ನಿರಂತರ ಪರಿಪೂರ್ಣರನ್ನಾಗಿ ಮಾಡಿದ್ದಾರೆ.</verse>
				<verse number="15">ಪವಿತ್ರಾತ್ಮ ದೇವರು ಸಹ ನಿಮಗೆ ಸಾಕ್ಷಿ ಕೊಡುವವರಾಗಿ,</verse>
				<verse number="16">“ಆ ದಿನಗಳ ತರುವಾಯ, ನಾನು ಅವರ ಸಂಗಡ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವುದು: ನಾನು ನನ್ನ ನಿಯಮಗಳನ್ನು ಅವರ ಹೃದಯಗಳಲ್ಲಿ ಇಡುವೆನು. ಅವರ ಮನಸ್ಸಿನಲ್ಲಿ ಅವುಗಳನ್ನು ಬರೆಯುವೆನು, ಎಂದು ಕರ್ತದೇವರು ಹೇಳುತ್ತಾರೆ.”</verse>
				<verse number="17">ತರುವಾಯ ಅವರು, “ನಾನು ಅವರ ಪಾಪಗಳನ್ನೂ ಅಧರ್ಮಗಳನ್ನೂ ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ!” ಎಂದು ಹೇಳುತ್ತಾರೆ.</verse>
				<verse number="18">ಆದ್ದರಿಂದ, ಈಗ ಕ್ಷಮಾಪಣೆಯಾದ ಬಳಿಕ ಪಾಪ ಪರಿಹಾರದ ಬಲಿಯ ಅವಶ್ಯಕತೆ ಇಲ್ಲ.</verse>
				<verse number="19">ಆದ್ದರಿಂದ ಪ್ರಿಯರೇ, ಯೇಸುವಿನ ರಕ್ತದಿಂದ ಅವರ ದೇಹವೆಂಬ ಪರದೆಯ ಮೂಲಕ ನಮಗೆ ತೆರೆಯಲಾದ</verse>
				<verse number="20">ಹೊಸ ಹಾಗೂ ಸಜೀವವಾದ ಮಾರ್ಗವಿರುವುದರಿಂದ ಅತಿಪರಿಶುದ್ಧವಾದ ಸ್ಥಳವನ್ನು ಪ್ರವೇಶಿಸಲು ಭರವಸೆಯಿದೆ.</verse>
				<verse number="21">ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವುದರಿಂದ</verse>
				<verse number="22">ಆದಕಾರಣ ಅಪರಾಧ ಮನಸ್ಸಾಕ್ಷಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ಶುದ್ಧ ನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಸಮೀಪಕ್ಕೆ ಬರೋಣ.</verse>
				<verse number="23">ನಾವು ನಮ್ಮ ನಿರೀಕ್ಷೆಯ ಅರಿಕೆಯನ್ನು ಚಂಚಲರಾಗದೆ ಬಿಗಿಯಾಗಿ ಹಿಡಿಯೋಣ. ಏಕೆಂದರೆ ವಾಗ್ದಾನ ಮಾಡಿದವರು ನಂಬಿಗಸ್ತರು.</verse>
				<verse number="24">ನಾವು ಒಬ್ಬರನ್ನೊಬ್ಬರು ಪ್ರೀತಿಸುವುದಕ್ಕಾಗಿಯೂ ಸತ್ಕಾರ್ಯ ಮಾಡುವುದಕ್ಕಾಗಿಯೂ ಹೇಗೆ ಒಬ್ಬರನ್ನೊಬ್ಬರು ಪ್ರೋತ್ಸಾಹಿಸಬೇಕೆಂದು ಯೋಚಿಸೋಣ.</verse>
				<verse number="25">ಸಭೆಯಾಗಿ ಸೇರುವುದನ್ನು ಕೆಲವರಿಗೆ ರೂಢಿಯಾಗಿ ಬಿಟ್ಟಂತೆ, ನಾವು ಹಾಗೆ ಮಾಡದಿರೋಣ. ಕರ್ತ ಯೇಸುವಿನ ಪ್ರತ್ಯಕ್ಷತೆಯ ದಿನವು ಸಮೀಪಿಸುತ್ತಾ ಬರುತ್ತದೆ ಎಂದು ನೀವು ತಿಳಿದಿರುವುದರಿಂದ ಒಬ್ಬರನ್ನೊಬ್ಬರು ಪ್ರೋತ್ಸಾಹಗೊಳಿಸುವುದನ್ನು ಇನ್ನೂ ಹೆಚ್ಚಾಗಿ ಮಾಡಿರಿ.</verse>
				<verse number="26">ಏಕೆಂದರೆ, ನಾವು ಸತ್ಯದ ಅರಿವನ್ನು ಹೊಂದಿದ ಮೇಲೆ ಬೇಕೆಂದು ಪಾಪ ಮಾಡುತ್ತಾ ಇದ್ದರೆ, ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.</verse>
				<verse number="27">ಆದರೆ ಖಂಡಿತವಾಗಿ ಎದುರು ನೋಡತಕ್ಕ ಭಯಂಕರವಾದ ನ್ಯಾಯತೀರ್ಪು ವಿರೋಧಿಗಳನ್ನು ದಹಿಸುವ ಕೋಪಾಗ್ನಿಯೂ ಇರುವುವು.</verse>
				<verse number="28">ಮೋಶೆಯ ನಿಯಮವನ್ನು ಅಸಡ್ಡೆ ಮಾಡಿದವನಿಗೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕರುಣೆಯಿಲ್ಲದೆ ಮರಣದಂಡನೆಯಾಗುತ್ತಿತ್ತು.</verse>
				<verse number="29">ಯಾವನು ದೇವಪುತ್ರರನ್ನೇ ತುಳಿದು ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಪವಿತ್ರಾತ್ಮ ದೇವರನ್ನು ತಿರಸ್ಕಾರ ಮಾಡಿದ್ದಾನೋ, ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗುವನೆಂಬುದನ್ನು ಯೋಚಿಸಿರಿ.</verse>
				<verse number="30">ಏಕೆಂದರೆ, “ಮುಯ್ಯಿ ತೀರಿಸುವುದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆನು,” ಎಂದು ಹೇಳಿದ ಕರ್ತದೇವರನ್ನು ನಾವು ಬಲ್ಲೆವು. ಇದಲ್ಲದೆ, “ಕರ್ತದೇವರು ತಮ್ಮ ಜನರಿಗೆ ನ್ಯಾಯತೀರಿಸುವರು,” ಎಂದೂ ಹೇಳಲಾಗಿದೆ.</verse>
				<verse number="31">ಸಜೀವ ದೇವರ ಕೈಯಲ್ಲಿ ಬೀಳುವುದು ಭಯಂಕರವಾದದ್ದು.</verse>
				<verse number="32">ಆದರೆ ನೀವು ಬೆಳಕನ್ನು ಹೊಂದಿದ ಮೇಲೆ ಬಾಧೆಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪುಮಾಡಿಕೊಳ್ಳಿರಿ.</verse>
				<verse number="33">ಕೆಲವು ಸಾರಿ ನೀವು ನಿಂದೆಗಳನ್ನೂ ಉಪದ್ರವಗಳನ್ನೂ ಅನುಭವಿಸಿ ಬಹಿರಂಗ ಹಾಸ್ಯಕ್ಕೆ ಗುರಿಯಾದಿರಿ. ಕೆಲವು ಸಾರಿ ಅಂಥವುಗಳನ್ನು ಅನುಭವಿಸುವವರ ಭಾಗಿಗಳಾದಿರಿ.</verse>
				<verse number="34">ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಸ್ಥಿರವಾದ ಉತ್ತಮ ಆಸ್ತಿಯಿದೆ ಎಂದು ತಿಳಿದು, ನಿಮ್ಮ ಆಸ್ತಿ ಸುಲಿಗೆಯಾದಾಗ ಸಂತೋಷವಾಗಿ ಬಿಟ್ಟುಕೊಟ್ಟಿದ್ದೀರಿ.</verse>
				<verse number="35">ಮಹಾ ಪ್ರತಿಫಲ ನಿಮಗಿರುವುದರಿಂದ ನಿಮ್ಮ ಧೈರ್ಯವನ್ನು ಕಳೆದುಕೊಳ್ಳಬೇಡಿರಿ.</verse>
				<verse number="36">ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ಅವರು ಮಾಡಿದ ವಾಗ್ದಾನವನ್ನು ಹೊಂದುವಂತೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ:</verse>
				<verse number="37">ಏಕೆಂದರೆ, “ಇನ್ನು ಸ್ವಲ್ಪ ಸಮಯದಲ್ಲಿಯೇ, ಬರಲಿರುವ ಒಬ್ಬರು ಬಂದೇ ಬರುವರು. ಅವರು ತಡಮಾಡುವುದಿಲ್ಲ.”</verse>
				<verse number="38">ಆದರೆ, “ನನ್ನ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಹಿಂಜರಿದರೆ, ಅವನಲ್ಲಿ ನನಗೆ ಸಂತೋಷವಿರುವುದಿಲ್ಲ.”</verse>
				<verse number="39">ನಾವಾದರೋ ಹಿಂಜರಿದು ನಾಶವಾಗುವವರಲ್ಲ, ನಂಬುವವರಾಗಿ ಆ ರಕ್ಷಣೆಯನ್ನು ಹೊಂದುವವರಾಗಿದ್ದೇವೆ.</verse>
			</chapter>
			<chapter number="11">
				<verse number="1">ನಂಬಿಕೆ ಎಂಬುದು ನಾವು ನಿರೀಕ್ಷಿಸುವವುಗಳ ನಿಶ್ಚಯವೂ ಕಾಣದವುಗಳ ನಿದರ್ಶನವೂ ಆಗಿದೆ.</verse>
				<verse number="2">ಹಿರಿಯರು ನಂಬಿಕೆಯಿಂದಲೇ ಒಳ್ಳೆಯ ಸಾಕ್ಷಿಹೊಂದಿದರು.</verse>
				<verse number="3">ವಿಶ್ವವು ದೇವರ ವಾಕ್ಯದಿಂದ ಉಂಟಾದವೆಂದೂ ಕಾಣುವಂತವುಗಳು ಕಾಣದವುಗಳಿಂದ ಉಂಟಾದವು ಎಂಬುದನ್ನು ನಾವು ನಂಬಿಕೆಯಿಂದ ತಿಳಿದುಕೊಂಡದ್ದರಿಂದ ಗ್ರಹಿಸುತ್ತೇವೆ.</verse>
				<verse number="4">ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಉತ್ತಮ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಅದರ ಮೂಲಕ ಅವನು ನೀತಿವಂತನೆಂದು ಸಾಕ್ಷಿಹೊಂದಿದನು. ದೇವರು ಸಹ ಅವನ ಕಾಣಿಕೆಗಳನ್ನು ಸ್ವೀಕಾರಮಾಡಿದರು. ಅವನು ಸತ್ತು ಹೋಗಿದ್ದರೂ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.</verse>
				<verse number="5">ನಂಬಿಕೆಯಿಂದಲೇ ಹನೋಕನು ಮರಣ ಹೊಂದದೆ, ಒಯ್ಯಲಾದನು. “ದೇವರು ಅವನನ್ನು ತೆಗೆದುಕೊಂಡು ಹೋದದ್ದರಿಂದ ಅವನು ಕಾಣಲಿಲ್ಲ.” ಅವನು ಒಯ್ಯಲಾಗುವುದಕ್ಕಿಂತ ಮುಂಚೆ ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿಹೊಂದಿದನು.</verse>
				<verse number="6">ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವರು, ದೇವರು ಇದ್ದಾರೆಂತಲೂ ತಮ್ಮನ್ನು ಜಾಗ್ರತೆಯಿಂದ ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾರೆಂತಲೂ ನಂಬಬೇಕು.</verse>
				<verse number="7">ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಕೆ ಪಡೆದು ಭಕ್ತಿಯಲ್ಲಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧಮಾಡಿದನು. ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಗೆ ಅನುಸಾರವಾಗಿ ನಂಬಿಕೆಯಿಂದ ಬರುವ ನೀತಿಗೆ ಬಾಧ್ಯನಾದನು.</verse>
				<verse number="8">ನಂಬಿಕೆಯಿಂದಲೇ ಅಬ್ರಹಾಮನು ಕರೆಕೊಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು. ತಾನು ಹೋಗುವುದು ಎಲ್ಲಿಗೆ ಎಂದು ತಿಳಿಯದೆ ಹೊರಟನು.</verse>
				<verse number="9">ನಂಬಿಕೆಯಿಂದಲೇ ಅವನು ವಾಗ್ದಾನದ ದೇಶಕ್ಕೆ ಬಂದಾಗಲೂ ಅನ್ಯದೇಶದಲ್ಲಿ ಇದ್ದವನಂತೆ ಗುಡಾರಗಳಲ್ಲಿ ಇದ್ದುಕೊಂಡು ಪ್ರವಾಸಿಯಾಗಿದ್ದನು. ಅದೇ ವಾಗ್ದಾನಕ್ಕೆ ಬಾಧ್ಯರಾಗಿದ್ದ ಇಸಾಕ ಯಾಕೋಬರು ಸಹ ಗುಡಾರಗಳಲ್ಲಿ ವಾಸಿಸಿದರು.</verse>
				<verse number="10">ಏಕೆಂದರೆ ದೇವರು ಯಾವುದನ್ನು ಕಟ್ಟುವವರೂ ಮಾಡುವವರೂ ಆಗಿದ್ದಾರೋ ಆ ಅಸ್ತಿವಾರಗಳುಳ್ಳ ಪಟ್ಟಣಕ್ಕೋಸ್ಕರ ಅವರು ಎದುರುನೋಡುತ್ತಿದ್ದರು.</verse>
				<verse number="11">ನಂಬಿಕೆಯಿಂದಲೇ ಸಾರಳು ಸಹ ವಾಗ್ದಾನ ಮಾಡಿದ ದೇವರು ನಂಬಿಗಸ್ತರು ಎಂದೆಣಿಸಿ ತಾನು ಪ್ರಾಯಮೀರಿದವಳಾಗಿದ್ದರೂ ಗರ್ಭವತಿಯಾಗುವುದಕ್ಕೆ ಸಾಮರ್ಥ್ಯ ಹೊಂದಿ, ಒಂದು ಮಗುವನ್ನು ಹೆತ್ತಳು.</verse>
				<verse number="12">ಆದ್ದರಿಂದ ಮೃತಪ್ರಾಯನಾಗಿದ್ದ ಒಬ್ಬನಿಂದ ಆಕಾಶದ ನಕ್ಷತ್ರಗಳಂತೆ ಗುಂಪುಗುಂಪಾಗಿಯೂ ಸಮುದ್ರ ತೀರದಲ್ಲಿರುವ ಮರಳಿನಂತೆ ಅಸಂಖ್ಯವಾಗಿಯೂ ಸಂತತಿಯವರು ಹುಟ್ಟಿದರು.</verse>
				<verse number="13">ಈ ಎಲ್ಲಾ ಜನರು ಮರಣ ಹೊಂದುವಾಗಲೂ ವಿಶ್ವಾಸದಿಂದ ಜೀವಿಸುವವರಾಗಿದ್ದರು. ವಾಗ್ದಾನದ ಸಂಗತಿಗಳನ್ನು ಅವರು ಹೊಂದಲಿಲ್ಲ. ಅವುಗಳನ್ನು ಅವರು ದೂರದಿಂದಲೇ ನೋಡಿ ಸ್ವಾಗತಿಸಿದರು. ತಾವು ಭೂಮಿಯ ಮೇಲೆ ಪರದೇಶದವರೂ ಅಪರಿಚಿತರೂ ಆಗಿದ್ದೇವೆಂದು ಒಪ್ಪಿಕೊಂಡರು.</verse>
				<verse number="14">ಇಂಥಾ ಸಂಗತಿಗಳನ್ನು ಹೇಳುವ ಜನರು ತಮ್ಮ ಸ್ವಂತ ದೇಶಕ್ಕಾಗಿ ಎದುರುನೋಡುತ್ತಿದ್ದರು.</verse>
				<verse number="15">ಒಂದು ವೇಳೆ ತಾವು ಬಿಟ್ಟುಬಂದ ದೇಶವನ್ನು ಕುರಿತು ಅವರು ಯೋಚಿಸುತ್ತಿದ್ದರೆ, ಅಲ್ಲಿಗೆ ಹಿಂದಿರುಗಿ ಹೋಗುವ ಅವಕಾಶಗಳು ಅವರಿಗಿದ್ದವು.</verse>
				<verse number="16">ಅದರ ಬದಲು ಅವರು ಅದಕ್ಕಿಂತ ಉತ್ತಮವಾದ ಪರಲೋಕದ ದೇಶವನ್ನು ನಿರೀಕ್ಷಿಸಿದರು. ಆದ್ದರಿಂದ ದೇವರು ಅವರ ದೇವರೆನಿಸಿಕೊಳ್ಳುವುದಕ್ಕೆ ನಾಚಿಕೊಳ್ಳದೆ ಅವರಿಗಾಗಿ ಒಂದು ಪಟ್ಟಣವನ್ನು ಸಿದ್ಧಮಾಡಿದ್ದಾರೆ.</verse>
				<verse number="17">ಅಬ್ರಹಾಮನು ಪರೀಕ್ಷೆಗೆ ಒಳಗಾದಾಗ ಇಸಾಕನನ್ನು ನಂಬಿಕೆಯಿಂದಲೇ ಸಮರ್ಪಿಸಿದನು. ಆ ವಾಗ್ದಾನಗಳನ್ನು ಹೊಂದಿದ ಅವನು ತನ್ನ ಒಬ್ಬನೇ ಮಗನನ್ನು ಸಮರ್ಪಿಸಿದನು.</verse>
				<verse number="18">ಅವನ ವಿಷಯದಲ್ಲಿ, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು,” ಎಂದು ದೇವರು ಅವನಿಗೆ ಹೇಳಿದ್ದರೂ ವಾಗ್ದಾನ ಸ್ವೀಕರಿಸಿದವನು ತನ್ನ ಒಬ್ಬನೇ ಮಗನನ್ನು ಬಲಿಗಾಗಿ ಅರ್ಪಿಸಿದನು.</verse>
				<verse number="19">ತನ್ನ ದೇವರು ಸತ್ತವರೊಳಗಿಂದ ಎಬ್ಬಿಸಲು ಸಮರ್ಥರು ಎಂದು ಅಬ್ರಹಾಮನು ತಿಳಿದಿದ್ದನು. ಅವನು ಇಸಾಕನನ್ನು ಸತ್ತವರೊಳಗಿಂದಲೇ ಜೀವಿತನಾಗಿ ಬಂದವನಂತೆ ಅವನನ್ನು ಹೊಂದಿದನು.</verse>
				<verse number="20">ನಂಬಿಕೆಯಿಂದಲೇ ಇಸಾಕನು ಮುಂದೆ ಬರಬೇಕಾದವುಗಳ ವಿಷಯದಲ್ಲಿ ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು.</verse>
				<verse number="21">ನಂಬಿಕೆಯಿಂದಲೇ ಯಾಕೋಬನು ಮರಣ ಹೊಂದುವ ಸಮಯದಲ್ಲಿ ಯೋಸೇಫನ ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.</verse>
				<verse number="22">ನಂಬಿಕೆಯಿಂದಲೇ ಯೋಸೇಫನು ಸಾಯುವಾಗ ಇಸ್ರಾಯೇಲರು ಹೊರಡುವುದನ್ನು ಕುರಿತು ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.</verse>
				<verse number="23">ನಂಬಿಕೆಯಿಂದಲೇ ಮೋಶೆ ಹುಟ್ಟಿದಾಗ ಕೂಸು ಸುಂದರವಾಗಿರುವುದನ್ನು ಅವನ ತಂದೆತಾಯಿಗಳು ನೋಡಿ ಅರಸನ ಅಪ್ಪಣೆಗೆ ಭಯಪಡದೆ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.</verse>
				<verse number="24">ಮೋಶೆಯು ದೊಡ್ಡವನಾಗಿ ಬೆಳೆದ ಮೇಲೆ ನಂಬಿಕೆಯಿಂದಲೇ ಫರೋಹನ ಪುತ್ರಿಯ ಮಗನೆಂದು ಕರೆಯಿಸಿಕೊಳ್ಳಲು ನಿರಾಕರಿಸಿದ್ದನು.</verse>
				<verse number="25">ಮೋಶೆ ಗತಿಸಿ ಹೋಗುವ ಪಾಪಭೋಗಗಳನ್ನು ಅನುಭವಿಸುವುದಕ್ಕಿಂತ, ದೇವಜನರೊಂದಿಗೆ ಕಷ್ಟ ಅನುಭವಿಸುವುದನ್ನೇ ಆರಿಸಿಕೊಂಡನು.</verse>
				<verse number="26">ಈಜಿಪ್ಟಿನ ನಿಕ್ಷೇಪಕ್ಕಿಂತಲೂ ಕ್ರಿಸ್ತ ಯೇಸುವಿಗಾಗಿ ನಿಂದೆಯನ್ನು ಹೊಂದುವುದು ಮಹಾಐಶ್ವರ್ಯವೆಂದೆಣಿಸಿಕೊಂಡನು. ಏಕೆಂದರೆ ಅವನು ತನ್ನ ಬಹುಮಾನಕ್ಕಾಗಿ ಎದುರು ನೋಡಿದನು.</verse>
				<verse number="27">ನಂಬಿಕೆಯಿಂದಲೇ ಮೋಶೆ ಅರಸನ ಕೋಪಕ್ಕೆ ಭಯಪಡದೆ ಈಜಿಪ್ಟನ್ನು ಬಿಟ್ಟುಹೋದನು. ಏಕೆಂದರೆ ಅವನು ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿದ್ದನು.</verse>
				<verse number="28">ಚೊಚ್ಚಲ ಮಕ್ಕಳನ್ನು ಸಂಹರಿಸುವ ದೂತನು ಇಸ್ರಾಯೇಲರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ ಮೋಶೆ ನಂಬಿಕೆಯಿಂದಲೇ ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದನು.</verse>
				<verse number="29">ನಂಬಿಕೆಯಿಂದಲೇ ಇಸ್ರಾಯೇಲರು ಒಣ ಭೂಮಿಯನ್ನು ದಾಟುವಂತೆ ಕೆಂಪು ಸಮುದ್ರವನ್ನು ದಾಟಿದರು. ಈಜಿಪ್ಟಿನವರು ಅದನ್ನು ದಾಟುವುದಕ್ಕೆ ಪ್ರಯತ್ನಿಸಿ ಮುಳುಗಿ ಹೋದರು.</verse>
				<verse number="30">ಇಸ್ರಾಯೇಲರು ಏಳು ದಿವಸಗಳು ಯೆರಿಕೋವಿನ ಗೋಡೆಗಳನ್ನು ಸುತ್ತಿದ ಮೇಲೆ, ಅವು ಬಿದ್ದು ಹೋದದ್ದು ನಂಬಿಕೆಯಿಂದಲೇ.</verse>
				<verse number="31">ರಹಾಬಳೆಂಬ ವೇಶ್ಯೆಯು ಗೂಢಚಾರರನ್ನು ಸಮಾಧಾನವಾಗಿ ಸ್ವಾಗತಿಸಿದ್ದರಿಂದ ಅವಿಧೇಯರೊಂದಿಗೆ ನಾಶವಾಗದೆ ಉಳಿದದ್ದು ನಂಬಿಕೆಯಿಂದಲೇ.</verse>
				<verse number="32">ಇನ್ನೂ ಏನು ಹೇಳಬೇಕು? ಗಿಡಿಯೋನ್, ಬಾರಾಕ್, ಸಂಸೋನ್, ಎಪ್ತಾಹ, ದಾವೀದ, ಸಮುಯೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳುವುದಕ್ಕೆ ನನಗೆ ಸಮಯ ಸಾಲದು.</verse>
				<verse number="33">ಇವರೆಲ್ಲರೂ ನಂಬಿಕೆಯ ಮೂಲಕವೇ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು. ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು,</verse>
				<verse number="34">ಬೆಂಕಿಯ ಶಕ್ತಿಯನ್ನು ಆರಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ಬಲಹೀನತೆಯಿಂದ ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರರ ಸೈನ್ಯಗಳನ್ನು ಓಡಿಸಿಬಿಟ್ಟರು,</verse>
				<verse number="35">ಸ್ತ್ರೀಯರು ಸತ್ತು ಹೋಗಿದ್ದ ತಮ್ಮವರನ್ನು ಜೀವದಿಂದ ತಿರುಗಿ ಪಡೆದುಕೊಂಡರು. ಆದರೆ ಬೇರೆ ಕೆಲವರು ತಾವು ಯಾತನೆ ಹೊಂದುತ್ತಿರುವಾಗ ಉತ್ತಮ ಪುನರುತ್ಥಾನ ಹೊಂದುವುದಕ್ಕಾಗಿ ತಮಗೆ ಬಿಡುಗಡೆಯನ್ನು ಸ್ವೀಕರಿಸದೆ ಹೋದರು,</verse>
				<verse number="36">ಇನ್ನೂ ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು ತಿಂದು ಬೇಡಿ ಸೆರೆವಾಸವನ್ನು ಸಹ ಅನುಭವಿಸಿದರು,</verse>
				<verse number="37">ಕೆಲವರ ಮೇಲೆ ಕಲ್ಲೆಸೆದರು, ಕೆಲವರನ್ನು ಗರಗಸದಿಂದ ಎರಡು ಭಾಗವಾಗಿ ಕೊಯ್ದು ಸಾಯಿಸಿದರು, ಕೆಲವರನ್ನು ಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು, ಕೆಲವರು ಕೊರತೆ, ಹಿಂಸೆ, ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿಮೇಕೆಗಳ ಚರ್ಮಗಳನ್ನು ಉಟ್ಟುಕೊಂಡವರಾಗಿ</verse>
				<verse number="38">ಭೂಮಿಯ ಕಾಡು, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು. ಇಂಥವರಿಗೆ ಈ ಲೋಕವು ಯೋಗ್ಯವಾದ ಸ್ಥಳವಲ್ಲ.</verse>
				<verse number="39">ಇವರೆಲ್ಲರೂ ತಮ್ಮ ನಂಬಿಕೆಯ ಮೂಲಕ ಒಳ್ಳೆಯ ಸಾಕ್ಷಿಯನ್ನು ಹೊಂದಿದವರಾಗಿದ್ದರೂ ವಾಗ್ದಾನವಾದದ್ದನ್ನು ಹೊಂದಲಿಲ್ಲ.</verse>
				<verse number="40">ಏಕೆಂದರೆ ನಮ್ಮೊಂದಿಗೆ ಅವರು ಪರಿಪೂರ್ಣರಾಗಬೇಕೆಂದು ದೇವರು ನಮಗೋಸ್ಕರ ಉತ್ತಮವಾದದ್ದನ್ನು ಸಂಕಲ್ಪಿಸಿದ್ದಾರೆ.</verse>
			</chapter>
			<chapter number="12">
				<verse number="1">ಆದಕಾರಣ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಇರುವುದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನೂ ನಾವು ಎಸೆದುಬಿಟ್ಟು,</verse>
				<verse number="2">ನಮ್ಮಲ್ಲಿ ನಂಬಿಕೆಯನ್ನು ಹುಟ್ಟಿಸುವವರೂ ಅದನ್ನು ಪರಿಪೂರ್ಣಗೊಳಿಸುವವರೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು, ನಮ್ಮ ಮುಂದೆ ಇಟ್ಟಿರುವ ಓಟವನ್ನು ಸಹನೆಯಿಂದ ಓಡೋಣ. ಯೇಸು ತಮ್ಮ ಮುಂದೆ ಇಟ್ಟಿದ್ದ ಸಂತೋಷಕ್ಕಾಗಿ ಶಿಲುಬೆಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ, ಈಗ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿದ್ದಾರೆ.</verse>
				<verse number="3">ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡ ಯೇಸುವನ್ನು ಕುರಿತು ನೀವು ಯೋಚಿಸಿರಿ.</verse>
				<verse number="4">ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವುದರಲ್ಲಿ, ಇನ್ನೂ ರಕ್ತವನ್ನು ಸುರಿಸುವಷ್ಟು ಅದನ್ನು ಎದುರಿಸಲಿಲ್ಲ.</verse>
				<verse number="5">ಒಬ್ಬ ತಂದೆ ಮಕ್ಕಳಾಗಿರುವ ನಿಮಗೆ ಎಚ್ಚರಿಸಲಾದ ಮಾತನ್ನು ನೀವು ಮರೆತಿದ್ದೀರಿ. ಅದು, “ನನ್ನ ಮಗನೇ, ಕರ್ತದೇವರ ಶಿಕ್ಷೆಯನ್ನು ಹಗುರವಾಗಿ ಎಣಿಸಬೇಡ. ಅವರು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.</verse>
				<verse number="6">ಏಕೆಂದರೆ, ಕರ್ತದೇವರು ಯಾರನ್ನು ಪ್ರೀತಿಸುತ್ತಾರೋ ಅವರನ್ನು ಶಿಕ್ಷಿಸುತ್ತಾರೆ. ತಾವು ಸ್ವೀಕರಿಸುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾರೆ!” ಎಂಬುದಾಗಿದೆ.</verse>
				<verse number="7">ಶಿಸ್ತಿಗಾಗಿ ಕಷ್ಟವನ್ನು ನೀವು ಸಹಿಸಿಕೊಳ್ಳಬೇಕು. ದೇವರು ನಿಮ್ಮನ್ನು ಮಕ್ಕಳೆಂದು ನಡೆಸಿಕೊಳ್ಳುತ್ತಾರೆ. ಏಕೆಂದರೆ ತಂದೆಯಿಂದ ಶಿಸ್ತುಹೊಂದದ ಮಕ್ಕಳೆಲ್ಲಿ?</verse>
				<verse number="8">ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರರಾಗಿರದಿದ್ದರೆ, ನೀವು ಅಕ್ರಮವಾಗಿ ಹುಟ್ಟಿದ ಮಕ್ಕಳೇ ಹೊರತು ನಿಜ ಮಕ್ಕಳಲ್ಲ.</verse>
				<verse number="9">ಇದು ಮಾತ್ರವಲ್ಲದೆ, ನಮ್ಮನ್ನು ಶಿಕ್ಷಿಸಿದ ಇಹಲೋಕದ ಶಾರೀರಿಕ ತಂದೆಗಳನ್ನು ನಾವು ಸನ್ಮಾನಿಸಿದೆವಷ್ಟೆ. ಆತ್ಮಗಳಿಗೆ ತಂದೆಯಾದ ದೇವರಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?</verse>
				<verse number="10">ನಮ್ಮ ತಂದೆಯಾದವರು ತಮಗೆ ಒಳ್ಳೆಯದೆಂದು ತಿಳಿದಾಗ, ಸ್ವಲ್ಪಕಾಲ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ತಮ್ಮ ಪವಿತ್ರತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಒಳ್ಳೆಯದಕ್ಕಾಗಿಯೇ ಶಿಕ್ಷಿಸುತ್ತಾರೆ.</verse>
				<verse number="11">ಯಾವ ಶಿಕ್ಷೆಯಾದರೂ ಆ ಸಮಯಕ್ಕೆ ಸಂತೋಷಕರವಾಗಿ ತೋಚದೆ, ದುಃಖಕರವಾಗಿ ತೋಚುತ್ತದೆ. ತರುವಾಯ, ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನವುಳ್ಳ ನೀತಿಯ ಫಲವನ್ನು ಕೊಡುತ್ತದೆ.</verse>
				<verse number="12">ಆದ್ದರಿಂದ, ಜೋತು ಬಿದ್ದ ಕೈಗಳನ್ನೂ ಬಲಹೀನವಾದ ಮೊಣಕಾಲುಗಳನ್ನೂ ಬಲಪಡಿಸಿರಿ.</verse>
				<verse number="13">“ನಿಮ್ಮ ಪಾದಗಳಿಗೆ ನೇರವಾದ ದಾರಿಯನ್ನು ಮಾಡಿರಿ.” ಹೀಗೆ ಮಾಡಿದರೆ ಕುಂಟ ಕಾಲು ಉಳುಕಿಹೋಗದೆ ವಾಸಿಯಾಗುವುದು.</verse>
				<verse number="14">ಎಲ್ಲರ ಸಂಗಡ ಸಮಾಧಾನದಿಂದ ಜೀವಿಸಲು ಮತ್ತು ಪವಿತ್ರರಾಗಿರಲು ಸರ್ವಪ್ರಯತ್ನ ಮಾಡಿರಿ. ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವುದಿಲ್ಲ.</verse>
				<verse number="15">ನಿಮ್ಮಲ್ಲಿ ಯಾರೂ ದೇವರ ಕೃಪೆಗೆ ತಪ್ಪಿಹೋಗದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅದರಿಂದ ಅನೇಕರು ಮಲಿನರಾಗದಂತೆಯೂ</verse>
				<verse number="16">ಯಾವ ಕಾಮುಕರಾಗಲಿ, ಏಸಾವನಂಥ ಪ್ರಾಪಂಚಿಕರಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆಯಿಂದ ನೋಡಿಕೊಳ್ಳಿರಿ. ಅವನು ಒಂದು ತುತ್ತು ಅನ್ನಕ್ಕಾಗಿ ತನ್ನ ಚೊಚ್ಚಲುತನದ ಹಕ್ಕನ್ನು ಮಾರಿಬಿಟ್ಟನು.</verse>
				<verse number="17">ತರುವಾಯ ಅವನು ಆಶೀರ್ವಾದವನ್ನು ಬಾಧ್ಯವಾಗಿ ಹೊಂದಬೇಕೆಂದು ಬಯಸಿ, ಕಣ್ಣೀರನ್ನು ಸುರಿಸುತ್ತಾ ಬೇಡಿಕೊಂಡರೂ ಪಶ್ಚಾತ್ತಾಪಕ್ಕೆ ಮಾರ್ಗವಿಲ್ಲದೆ ನಿರಾಕರಿಸಲಾದವನೆಂದು ನೀವು ಬಲ್ಲಿರಿ.</verse>
				<verse number="18">ನೀವು ಮುಟ್ಟಬಹುದಾದ ಮತ್ತು ಬೆಂಕಿಹತ್ತಿದಂಥ ಬೆಟ್ಟಕ್ಕೂ ಮಬ್ಬಿಗೂ ಕತ್ತಲೆಗೂ ಬಿರುಗಾಳಿಗೂ</verse>
				<verse number="19">ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು, ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು.</verse>
				<verse number="20">ಏಕೆಂದರೆ, “ಯಾವ ಮೃಗವಾದರೂ ಬೆಟ್ಟವನ್ನು ಮುಟ್ಟಿದರೆ, ಅದನ್ನು ಕಲ್ಲೆಸೆದು ಕೊಲ್ಲಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕು,” ಎಂದು ಆಜ್ಞಾಪಿಸಿದ್ದನ್ನು ಅವರು ತಾಳಲಾರದೆ ಹೋದರು.</verse>
				<verse number="21">ಇದಲ್ಲದೆ ಆ ದೃಶ್ಯವು ಎಷ್ಟೋ ಭಯಂಕರವಾದದ್ದರಿಂದ ಮೋಶೆಯು, “ನಾನು ಭಯದಿಂದಲೂ ನಡುಕದಿಂದಲೂ ತುಂಬಿದವನಾಗಿದ್ದೇನೆ!” ಎಂದು ಹೇಳಿದನು.</verse>
				<verse number="22">ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವವುಳ್ಳ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಆನಂದಭರಿತ ಅಸಂಖ್ಯಾತ ದೇವದೂತಗಣಗಳ ಬಳಿಗೂ</verse>
				<verse number="23">ಪರಲೋಕದಲ್ಲಿ ಹೆಸರು ದಾಖಲಾಗಿರುವ ಮಂಡಳಿಗೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೂ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಪರಿಪೂರ್ಣವಾಗಿರುವ ನೀತಿವಂತರ ಆತ್ಮಗಳ ಬಳಿಗೂ</verse>
				<verse number="24">ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ, ಪ್ರೋಕ್ಷಿಸಿದ ರಕ್ತದ ಬಳಿಗೂ ಬಂದಿದ್ದೀರಿ.</verse>
				<verse number="25">ಮಾತನಾಡುವ ದೇವರನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ಎಚ್ಚರಿಸಿದವರನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ, ಪರಲೋಕದಿಂದ ಎಚ್ಚರಿಸುವ ದೇವರಿಂದ ನಾವು ತೊಲಗಿ ಹೋದರೆ, ಹೇಗೆ ತಾನೆ ದಂಡನೆಯಿಂದ ನಾವು ತಪ್ಪಿಸಿಕೊಳ್ಳಬಲ್ಲೆವು?</verse>
				<verse number="26">ಆ ಕಾಲದಲ್ಲಿ ದೇವರ ಧ್ವನಿಯು ಭೂಮಿಯನ್ನು ಕದಲಿಸಿತು. ಈಗಲಾದರೋ, “ಇನ್ನೊಂದು ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆ!” ಎಂದು ದೇವರು ವಾಗ್ದಾನಮಾಡಿದ್ದಾರೆ.</verse>
				<verse number="27">“ಇನ್ನೂ ಒಂದು ಸಾರಿ,” ಎಂಬ ಮಾತು ನಿರ್ಮಿತವಾಗಿರುವ ಕದಲುವ ವಸ್ತುಗಳು ತೆಗೆದುಹಾಕಲಾಗುವುದು ಎಂದೂ ಕದಲಿಸದೆ ಇರುವ ವಸ್ತುಗಳು ಸ್ಥಿರವಾಗಿರುವುದು ಎಂಬುದನ್ನು ಸೂಚಿಸುತ್ತದೆ.</verse>
				<verse number="28">ಆದಕಾರಣ ಯಾರೂ ಕದಲಿಸಲಾರದ ರಾಜ್ಯವನ್ನು, ಸ್ವೀಕರಿಸುವವರಾಗಿದ್ದುದರಿಂದ ನಾವು ಕೃತಜ್ಞತೆಯಿಂದ ಇರೋಣ. ನಾವು ದೇವರಿಗೆ ಭಯಭಕ್ತಿಯಿಂದ ಕೂಡಿದ ಮೆಚ್ಚಿಕೆಯುಳ್ಳ ಸೇವೆಯನ್ನು ಸಲ್ಲಿಸುವಂತೆ ಕೃತಜ್ಞತೆಯನ್ನು ತೋರಿಸುವವರಾಗಿರೋಣ.</verse>
				<verse number="29">ಏಕೆಂದರೆ ನಮ್ಮ, “ದೇವರು ದಹಿಸುವ ಅಗ್ನಿಯಾಗಿದ್ದಾರೆ.”</verse>
			</chapter>
			<chapter number="13">
				<verse number="1">ಪ್ರಿಯರೇ, ಒಬ್ಬರಿಗೊಬ್ಬರು ಪ್ರೀತಿಯಲ್ಲಿ ಮುಂದುವರೆಯಿರಿ.</verse>
				<verse number="2">ಪರಕೀಯರಿಗೆ ಸತ್ಕಾರ ಮಾಡುವುದನ್ನು ಅಲಕ್ಷ್ಯ ಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರ ಮೂಲಕ, ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.</verse>
				<verse number="3">ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂಬಂತೆ ಅವರನ್ನು ಜ್ಞಾಪಕಮಾಡಿಕೊಳ್ಳಿರಿ. ಕಷ್ಟ ಅನುಭವಿಸುವವರ ಸಂಗಡ ನೀವು ಸಹ ಕಷ್ಟ ಅನುಭವಿಸುವವರೆಂಬಂತೆ ನೆನೆಸಿರಿ.</verse>
				<verse number="4">ಎಲ್ಲರೂ ವಿವಾಹವನ್ನು ಗೌರವಿಸಬೇಕು ಮತ್ತು ದಾಂಪತ್ಯ ಜೀವನವು ಪರಿಶುದ್ಧವಾದದ್ದಾಗಿರಬೇಕು. ಏಕೆಂದರೆ ಜಾರರಿಗೂ ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವರು.</verse>
				<verse number="5">ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ, “ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ!”</verse>
				<verse number="6">ಆದ್ದರಿಂದ, “ಕರ್ತದೇವರು ನನ್ನ ಸಹಾಯಕರು, ನಾನು ಭಯಪಡೆನು. ಮನುಷ್ಯನು ನನಗೆ ಏನು ಮಾಡಬಲ್ಲನು?” ಎಂದು ನಾವು ಧೈರ್ಯವಾಗಿ ಹೇಳುವೆವು.</verse>
				<verse number="7">ನಿಮಗೆ ದೇವರ ವಾಕ್ಯವನ್ನು ತಿಳಿಸಿ, ನಿಮ್ಮನ್ನು ನಡೆಸಿದ ನಿಮ್ಮ ಪಾಲಕರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರು ಜೀವಿಸಿದ ದಾರಿಯ ಅಂತ್ಯ ಫಲವನ್ನು ಆಲೋಚಿಸಿ, ಅವರ ನಂಬಿಕೆಯನ್ನು ಅನುಸರಿಸಿರಿ.</verse>
				<verse number="8">ಕ್ರಿಸ್ತ ಯೇಸುವು ನಿನ್ನೆ ಇದ್ದ ಹಾಗೆ ಈ ಹೊತ್ತೂ ಇದ್ದಾರೆ, ನಿರಂತರವೂ ಹಾಗೆಯೇ ಇರುವರು.</verse>
				<verse number="9">ವಿಚಿತ್ರವಾದ ವಿವಿಧ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ಏಕೆಂದರೆ ಕೃಪೆಯ ಮೂಲಕ ಹೃದಯವನ್ನು ಬಲಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳಲ್ಲಿ ಮಗ್ನರಾದವರು, ಅವುಗಳಿಂದ ಏನೂ ಪ್ರಯೋಜನ ಹೊಂದಲಿಲ್ಲ.</verse>
				<verse number="10">ನಮಗೊಂದು ಬಲಿಪೀಠ ಉಂಟು. ಅದರ ಪದಾರ್ಥವನ್ನು ತಿನ್ನುವುದಕ್ಕೆ ಗುಡಾರದ ಸೇವೆ ಮಾಡುವವರಿಗೆ ಹಕ್ಕಿಲ್ಲ.</verse>
				<verse number="11">ಮಹಾಯಾಜಕನು ಪಾಪದ ನಿಮಿತ್ತವಾಗಿ ಪಶುಗಳ ರಕ್ತವನ್ನು ತೆಗೆದುಕೊಂಡು ಮಹಾ ಪವಿತ್ರ ಸ್ಥಳದೊಳಗೆ ಹೋದ ಮೇಲೆ, ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಟ್ಟು ಬಿಡಲಾಗುತ್ತವಲ್ಲಾ.</verse>
				<verse number="12">ಅದರಂತೆ ಯೇಸು ಸಹ ತಮ್ಮ ಸ್ವಂತ ರಕ್ತದಿಂದ ಜನರನ್ನು ಪವಿತ್ರಪಡಿಸುವುದಕ್ಕೋಸ್ಕರ ಊರ ಹೊರಗೆ ಬಾಧೆಪಟ್ಟರು.</verse>
				<verse number="13">ಆದ್ದರಿಂದ ನಾವು ಯೇಸು ಹೇಗೆ ನಿಂದನೆಯನ್ನು ಹೊತ್ತುಕೊಂಡರೋ ಹಾಗೆ ಹೊತ್ತು ಪಾಳೆಯದ ಆಚೆ ಅವರ ಬಳಿಗೆ ಹೊರಟು ಹೋಗೋಣ.</verse>
				<verse number="14">ಏಕೆಂದರೆ ಶಾಶ್ವತವಾದ ಪಟ್ಟಣವು ಇಲ್ಲಿ ನಮಗಿಲ್ಲ. ಮುಂದೆ ಬರುವ ಪಟ್ಟಣವನ್ನು ಹುಡುಕುತ್ತಾ ಇದ್ದೇವೆ.</verse>
				<verse number="15">ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಅದು ದೇವರ ಹೆಸರಿಗೆ ಸಲ್ಲಿಸುವ ಕೃತಜ್ಞತೆಯೆಂಬ ತುಟಿಗಳ ಫಲವೇ ಆಗಿದೆ.</verse>
				<verse number="16">ಇದಲ್ಲದೆ ಒಳ್ಳೆಯದನ್ನು ಮಾಡುವುದನ್ನೂ ಪರರೊಡನೆ ಹಂಚಿಕೊಳ್ಳುವುದನ್ನೂ ಮರೆಯಬೇಡಿರಿ. ಏಕೆಂದರೆ ಇಂಥಾ ಯಜ್ಞಗಳನ್ನು ದೇವರು ಮೆಚ್ಚುತ್ತಾರೆ.</verse>
				<verse number="17">ನಿಮ್ಮ ನಾಯಕರಿಗೆ ವಿಧೇಯರಾಗಿದ್ದು, ಅವರಿಗೆ ಅಧೀನರಾಗಿರಿ. ಏಕೆಂದರೆ ಅವರು ಲೆಕ್ಕ ಒಪ್ಪಿಸಬೇಕಾದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ಮನನೊಂದವರಾಗದೆ ಸಂತೋಷದಿಂದ ಇದನ್ನು ಮಾಡುವವರಾಗಲಿ. ಏಕೆಂದರೆ ಅವರು ಮನನೊಂದವರಾಗಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.</verse>
				<verse number="18">ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಶುದ್ಧಮನಸ್ಸಾಕ್ಷಿಯಿಂದ ಪ್ರತಿಯೊಂದರಲ್ಲಿಯೂ ಪ್ರಾಮಾಣಿಕವಾಗಿ ಇರಲು ಬಯಸುತ್ತೇವೆ.</verse>
				<verse number="19">ನೀವು ಪ್ರಾರ್ಥನೆ ಮಾಡುವಂತೆ, ನಾನು ನಿಮ್ಮನ್ನು ಬಹು ವಿಶೇಷವಾಗಿ ಬೇಡಿಕೊಳ್ಳುತ್ತೇನೆ. ಇದರ ಮೂಲಕ ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ಪುನಃ ಬರುವೆನು.</verse>
				<verse number="20">ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.</verse>
				<verse number="21">ನೀವು ದೇವರ ಚಿತ್ತಾನುಸಾರವಾಗಿ ಎಲ್ಲವನ್ನೂ ಮಾಡುವಂತೆ ನಿಮ್ಮನ್ನು ಸನ್ನದ್ಧರಾಗಿ ಮಾಡಲಿ. ಕ್ರಿಸ್ತ ಯೇಸುವಿನ ಶಕ್ತಿಯ ಮೂಲಕವಾಗಿ ಪ್ರತಿಯೊಂದು ಸತ್ಕಾರ್ಯಗಳನ್ನು ತಮಗೆ ಮೆಚ್ಚಿಕೆಯಾಗುವಂತೆ ನಿಮ್ಮ ಮೂಲಕವಾಗಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಯೇಸುವಿಗೆ ಮಹಿಮೆ ಉಂಟಾಗಲಿ. ಆಮೆನ್.</verse>
				<verse number="22">ಪ್ರಿಯರೇ, ಈ ಪ್ರಬೋಧನೆಗಳನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುವ ಹಾಗೆ ಸಂಕ್ಷೇಪವಾಗಿ ನಾನು ಈ ಪತ್ರವನ್ನು ಬರೆದಿದ್ದೇನೆ.</verse>
				<verse number="23">ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.</verse>
				<verse number="24">ನಿಮ್ಮ ಎಲ್ಲಾ ನಾಯಕರಿಗೆ, ದೇವಜನರಿಗೆ ವಂದನೆಗಳು. ಇಟಲಿಯವರು ನಿಮ್ಮನ್ನು ವಂದಿಸುತ್ತಾರೆ.</verse>
				<verse number="25">ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ!</verse>
			</chapter>
		</book>
		<book number="59">
			<chapter number="1">
				<verse number="1">ದೇವರಿಗೂ ಕರ್ತ ಆಗಿರುವ ಯೇಸು ಕ್ರಿಸ್ತರಿಗೂ ದಾಸನಾಗಿರುವ ಯಾಕೋಬನು, ವಿವಿಧ ದೇಶಗಳಲ್ಲಿ ಚದರಿರುವ ಇಸ್ರಾಯೇಲರ ಹನ್ನೆರಡು ಗೋತ್ರದವರಿಗೆ ಬರೆಯುವುದು: ನಿಮಗೆ ಶುಭವಾಗಲಿ.</verse>
				<verse number="2">ನನ್ನ ಪ್ರಿಯರೇ, ನಿಮ್ಮ ನಂಬಿಕೆಯು ವಿವಿಧ ಕಷ್ಟಗಳಿಗೆ ಗುರಿಯಾಗುವಾಗ ಅವುಗಳನ್ನು ಸಂತೋಷದಿಂದ ಎಣಿಸಿಕೊಳ್ಳಿರಿ.</verse>
				<verse number="3">ನಿಮ್ಮ ನಂಬಿಕೆಯ ಪರೀಕ್ಷೆಯು ದೃಢ ನಿಷ್ಠೆಯನ್ನು ಉಂಟುಮಾಡುತ್ತದೆ ಎಂದು ತಿಳಿದಿದ್ದೀರಿ.</verse>
				<verse number="4">ಆ ದೃಢ ನಿಷ್ಠೆಯು ನಿಮ್ಮಲ್ಲಿ ಪೂರ್ಣ ಕ್ರಿಯೆಯನ್ನು ಉಂಟುಮಾಡಿದಾಗ, ಆಗ ನೀವು ಪರಿಪಕ್ವತೆಗೆ ಬಂದವರೂ ಪರಿಪೂರ್ಣರೂ ಯಾವ ಕೊರತೆಯೂ ಇಲ್ಲದವರೂ ಆಗಿರುವಿರಿ.</verse>
				<verse number="5">ನಿಮ್ಮಲ್ಲಿ ಯಾರಿಗಾದರೂ ಜ್ಞಾನ ಕಡಿಮೆಯಾಗಿದ್ದರೆ, ಅವರು ದೇವರನ್ನು ಕೇಳಿಕೊಳ್ಳಲಿ, ಅದು ಅವರಿಗೆ ದೊರಕುವುದು. ದೇವರು ತಪ್ಪು ಕಂಡುಹಿಡಿಯದೆ ಎಲ್ಲರಿಗೂ ಉದಾರಮನಸ್ಸಿನಿಂದ ಕೊಡುವರು.</verse>
				<verse number="6">ನೀವು ಕೇಳಿಕೊಂಡಾಗ ಸ್ವಲ್ಪವೂ ಸಂದೇಹ ಪಡದೆ ನಂಬಿಕೆಯಿಂದ ಕೇಳಿಕೊಳ್ಳಿರಿ. ಏಕೆಂದರೆ ಸಂದೇಹ ಪಡುವವನು ಬಿರುಗಾಳಿಯ ಬಡಿತಕ್ಕೆ ಒಳಗಾದ ಸಮುದ್ರದ ತೆರೆಯಂತೆ ಅಲೆದಾಡುತ್ತಿರುವನು.</verse>
				<verse number="7">ಅಂಥವನು ತಾನು ಕರ್ತ ದೇವರಿಂದ ಏನಾದರೂ ಹೊಂದುವೆನೆಂದು ನಿರೀಕ್ಷಿಸದೆ ಇರಲಿ.</verse>
				<verse number="8">ಅಂತಹ ವ್ಯಕ್ತಿ ಎರಡು ಮನಸ್ಸುಳ್ಳವನೂ ತನ್ನ ಮಾರ್ಗಗಳಲ್ಲೆಲ್ಲಾ ಚಂಚಲನೂ ಆಗಿದ್ದಾನೆ.</verse>
				<verse number="9">ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತಸ್ಥಿತಿಗೆ ಬಂದೆನೆಂದು ಅಭಿಮಾನಪಡಲಿ.</verse>
				<verse number="10">ಐಶ್ವರ್ಯವಂತನಾದ ಸಹೋದರನು, ತಾನು ದೀನಸ್ಥಿತಿಗೆ ಬಂದೆನೆಂದು ಅಭಿಮಾನಪಡಲಿ. ಆದರೆ ಐಶ್ವರ್ಯವಂತನು ಕಾಡು ಹೂವಿನಂತೆ ಮರೆಯಾಗುವನು.</verse>
				<verse number="11">ಸೂರ್ಯನು ಉದಯಿಸಿದ ತರುವಾಯ ಉಷ್ಣತೆಯಿಂದ ಗಿಡ ಬಾಡಲು, ಅದರ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುವುದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿಗಳಲ್ಲಿ ಬಾಡಿಹೋಗುವನು.</verse>
				<verse number="12">ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತದೇವರು ತಮ್ಮನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದ ಜೀವದ ಕಿರೀಟವನ್ನು ಹೊಂದುವನು.</verse>
				<verse number="13">ಯಾರಿಗಾದರೂ ಶೋಧನೆ ಬಂದಾಗ, “ದೇವರು ನನ್ನನ್ನು ಶೋಧಿಸುತ್ತಿದ್ದಾರೆ ಎಂದು ಹೇಳಬಾರದು,” ಏಕೆಂದರೆ ದೇವರು ಕೆಟ್ಟದ್ದರಿಂದ ಶೋಧಿಸಲಾರರು. ಅವರು ಯಾರನ್ನೂ ಶೋಧಿಸುವುದೂ ಇಲ್ಲ.</verse>
				<verse number="14">ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಯಿಂದ ಆಕರ್ಷಿಸಿ ಮರುಳುಗೊಂಡವನಾಗಿ ಶೋಧನೆಗೆ ಒಳಗಾಗುವನು.</verse>
				<verse number="15">ಆಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಸಂಪೂರ್ಣವಾದ ಮೇಲೆ ಮರಣವನ್ನು ಹೆರುತ್ತದೆ.</verse>
				<verse number="16">ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.</verse>
				<verse number="17">ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.</verse>
				<verse number="18">ತಂದೆಯು ತಮ್ಮ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಅವರ ಸರ್ವ ಸೃಷ್ಟಿಗಳಲ್ಲಿ ಪ್ರಥಮ ಫಲವಾದೆವು.</verse>
				<verse number="19">ನನ್ನ ಪ್ರಿಯರೇ ಇದನ್ನು ತಿಳಿಯಿರಿ, ಪ್ರತಿಯೊಬ್ಬನು ಕಿವಿಗೊಡುವುದರಲ್ಲಿ ತೀವ್ರವಾಗಿಯೂ ಮಾತನಾಡುವುದರಲ್ಲಿ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.</verse>
				<verse number="20">ಏಕೆಂದರೆ ಮನುಷ್ಯನ ಕೋಪವು ದೇವರು ಬಯಸುವ ನೀತಿಯ ಜೀವನವನ್ನು ತರುವುದಿಲ್ಲ.</verse>
				<verse number="21">ಆದಕಾರಣ ಎಲ್ಲಾ ಮಾಲಿನ್ಯವನ್ನೂ ಉಳಿದಿರುವ ದುಷ್ಟತನವನ್ನೂ ತೆಗೆದುಹಾಕಿ, ನಿಮ್ಮೊಳಗೆ ಬೇರೂರಿರುವ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.</verse>
				<verse number="22">ನೀವು ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.</verse>
				<verse number="23">ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಮುಖವನ್ನು ನೋಡಿಕೊಂಡ ಮನುಷ್ಯನಂತಿರುವನು.</verse>
				<verse number="24">ಏಕೆಂದರೆ ಇವನು ತನ್ನನ್ನು ಕನ್ನಡಿಯಲ್ಲಿ ನೋಡಿಕೊಂಡು ಹೋಗಿದ್ದರೂ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು.</verse>
				<verse number="25">ಆದರೆ ಸ್ವಾತಂತ್ರ್ಯವನ್ನುಂಟುಮಾಡುವ ಪರಿಪೂರ್ಣವಾದ ನಿಯಮವನ್ನು ಲಕ್ಷ್ಯವಿಟ್ಟು ನೋಡುತ್ತಲೇ ಇರುವವನು, ಆ ವಾಕ್ಯವನ್ನು ಕೇಳಿದರೂ ಮರೆತು ಹೋಗದೆ ಅದರಂತೆ ನಡೆಯುವವನಾದ್ದರಿಂದ ಅವನು ಧನ್ಯನಾಗುವನು.</verse>
				<verse number="26">ನಿಮ್ಮಲ್ಲಿ ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜಕವಾಗಿದೆ.</verse>
				<verse number="27">ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಅವರ ಸಂಕಟದಲ್ಲಿ ಪರಾಮರಿಸಿ, ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವುದೇ ತಂದೆ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ದೋಷವೂ ಆಗಿರುವ ಭಕ್ತಿ.</verse>
			</chapter>
			<chapter number="2">
				<verse number="1">ನನ್ನ ಪ್ರಿಯರೇ, ಮಹಿಮೆಯುಳ್ಳ ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿ ವಿಶ್ವಾಸಿಗಳಾಗಿರುವ ನೀವು ಪಕ್ಷಪಾತಿಗಳಾಗಿರಬಾರದು.</verse>
				<verse number="2">ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರವನ್ನೂ ಅಂದವಾದ ವಸ್ತ್ರವನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬರಲು ಮತ್ತು ಒಬ್ಬ ಬಡ ಮನುಷ್ಯನು ಹರಕು ಬಟ್ಟೆ ಹಾಕಿಕೊಂಡು ಬರಲು</verse>
				<verse number="3">ನೀವು ಹೊಳೆಯುವ ವಸ್ತ್ರಗಳನ್ನು ಧರಿಸಿಕೊಂಡಿರುವವನನ್ನು ಗೌರವಿಸಿ ಆ ವ್ಯಕ್ತಿಗೆ, “ನೀವು ಇಲ್ಲಿಯ ಗೌರವ ಪೀಠದಲ್ಲಿ ಕುಳಿತುಕೊಳ್ಳಿರಿ,” ಎಂತಲೂ ಆ ಬಡವನಿಗೆ, “ನೀನು ಅಲ್ಲಿ ನಿಂತುಕೋ ಇಲ್ಲವೆ ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ,” ಎಂತಲೂ ಹೇಳಿದರೆ,</verse>
				<verse number="4">ನೀವು ಪಕ್ಷಪಾತಿಗಳಾಗಿ ಕೆಟ್ಟ ಆಲೋಚನೆಗಳ ನ್ಯಾಯಾಧಿಪತಿಗಳಾಗಿರುತ್ತೀರಲ್ಲವೇ?</verse>
				<verse number="5">ನನ್ನ ಪ್ರಿಯರೇ, ಕೇಳಿರಿ, ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ ತಮ್ಮನ್ನು ಪ್ರೀತಿಸುವವರಿಗೆ ತಾವು ವಾಗ್ದಾನಮಾಡಿದ ರಾಜ್ಯಕ್ಕೆ ಬಾಧ್ಯರನ್ನಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?</verse>
				<verse number="6">ನೀವಾದರೋ ಬಡವರನ್ನು ಅವಮಾನ ಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?</verse>
				<verse number="7">ನೀವು ಕರೆಸಿಕೊಳ್ಳುವ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೇ?</verse>
				<verse number="8">“ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು!” ಎಂದು ಪವಿತ್ರ ವೇದದಲ್ಲಿ ಬರೆದಿದೆ. ಈ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಉತ್ತಮವಾದದ್ದನ್ನು ಮಾಡುವವರಾಗಿರುವಿರಿ.</verse>
				<verse number="9">ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದೀರಿ. ಮಾತ್ರವಲ್ಲದೆ ಮೋಶೆಯ ನಿಯಮದ ಪ್ರಕಾರ ಅಪರಾಧಿಗಳೆಂದು ನಿರ್ಣಯ ಹೊಂದುತ್ತೀರಿ.</verse>
				<verse number="10">ಏಕೆಂದರೆ ಯಾವನಾದರೂ ಇಡೀ ಮೋಶೆಯ ನಿಯಮದಲ್ಲಿ ಒಂದೇ ಒಂದನ್ನು ಕೈಕೊಂಡು ನಡೆಯದೇ ಹೋದರೆ, ಅವನು ಇಡೀ ನಿಯಮವನ್ನೇ ಕೈಕೊಳ್ಳದ ಅಪರಾಧಿಯಾಗುತ್ತಾನೆ.</verse>
				<verse number="11">ಏಕೆಂದರೆ, “ವ್ಯಭಿಚಾರ ಮಾಡಬಾರದು,” ಎಂದು ಹೇಳಿದ ದೇವರೇ, “ನರಹತ್ಯೆ ಮಾಡಬಾರದು,” ಎಂತಲೂ ಹೇಳಿದರು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯೆ ಮಾಡಿದರೆ ನಿಯಮವನ್ನು ಮೀರಿದವನಾದೆ.</verse>
				<verse number="12">ಸ್ವಾತಂತ್ರ್ಯವನ್ನು ಉಂಟುಮಾಡುವ ನಿಯಮದಿಂದ ನಾವು ತೀರ್ಪುಹೊಂದುವೆವು ಎಂದು ತಿಳಿದು, ನಮ್ಮ ಮಾತುಗಳೂ ಕೃತ್ಯಗಳೂ ಅದಕ್ಕೆ ಅನುಸಾರವಾಗಿರಲಿ.</verse>
				<verse number="13">ಕರುಣೆ ತೋರಿಸದೆ ಇರುವವರಿಗೆ ಕರುಣೆಯಿಲ್ಲದ ನ್ಯಾಯತೀರ್ಪಾಗುವುದು. ಕರುಣೆವುಳ್ಳವರೋ ನ್ಯಾಯತೀರ್ಪಿನ ಮೇಲೆಯೇ ವಿಜಯವನ್ನು ಸಾಧಿಸುವರು.</verse>
				<verse number="14">ನನ್ನ ಪ್ರಿಯರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ?</verse>
				<verse number="15">ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ದಿನದ ಆಹಾರವೂ ಇಲ್ಲದಿರುವಾಗ,</verse>
				<verse number="16">ನಿಮ್ಮಲ್ಲಿ ಒಬ್ಬನು ಅವನಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ, “ಸಮಾಧಾನದಿಂದ ಹೋಗಿರಿ, ಚಳಿ ಕಾಯಿಸಿಕೊಳ್ಳಿರಿ, ಹೊಟ್ಟೆ ತುಂಬಿಸಿಕೊಳ್ಳಿರಿ,” ಎಂದು ಹೇಳಿದರೆ ಪ್ರಯೋಜನವೇನು?</verse>
				<verse number="17">ಅದರಂತೆಯೇ, ಕ್ರಿಯೆಗಳಿಲ್ಲದ ನಂಬಿಕೆಯು, ಕ್ರಿಯೆಗಳು ಇಲ್ಲದಿರುವುದರಿಂದ ಸತ್ತ ನಂಬಿಕೆಯಾಗಿರುತ್ತದೆ.</verse>
				<verse number="18">ಆದರೆ ಒಬ್ಬ ಮನುಷ್ಯನು, “ನಿನ್ನಲ್ಲಿ ನಂಬಿಕೆಯಿದೆ, ನನ್ನಲ್ಲಿ ಕ್ರಿಯೆಗಳಿವೆ,” ಎಂದು ವಾದಿಸಬಹುದು. ಅಂಥವನಿಗೆ, “ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ರುಜುಪಡಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ನಿನಗೆ ರುಜುಪಡಿಸುತ್ತೇನೆ,” ಎಂದು ಹೇಳಬಹುದು.</verse>
				<verse number="19">ದೇವರು ಒಬ್ಬರೇ ಎಂದು ನೀನು ನಂಬುತ್ತೀ, ಅದು ಒಳ್ಳೆಯದು, ದೆವ್ವಗಳು ಕೂಡ ಹಾಗೆಯೇ ನಂಬಿ ನಡುಗುತ್ತವೆ.</verse>
				<verse number="20">ಮೂರ್ಖನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಪ್ರಮಾಣಗಳು ಬೇಕೋ?</verse>
				<verse number="21">ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಬಲಿಪೀಠದ ಮೇಲೆ ಅರ್ಪಿಸಿದಾಗ ನೀತಿನಿರ್ಣಯವನ್ನು ಹೊಂದಿದ್ದು ಕ್ರಿಯೆಗಳಿಂದಲ್ಲವೇ?</verse>
				<verse number="22">ಅಬ್ರಹಾಮನ ನಂಬಿಕೆಯೂ ಕ್ರಿಯೆಗಳೂ ಒಂದಾಗಿ ಕಾರ್ಯ ಸಾಧಿಸಿದವು. ಹೀಗೆ ಅವನು ಮಾಡಿದ ಕ್ರಿಯೆಗಳಿಂದಲೇ ಅವನ ನಂಬಿಕೆಯು ಸಂಪೂರ್ಣಗೊಂಡಿತು ಎಂದು ನೋಡುತ್ತೇವೆ.</verse>
				<verse number="23">ಹೀಗೆ, “ಅಬ್ರಹಾಮನು ದೇವರನ್ನು ನಂಬಿದನು. ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರಿತು. ಅಬ್ರಹಾಮನು ದೇವರ ಸ್ನೇಹಿತನೆಂದು ಎಣಿಸಿಕೊಂಡನು.</verse>
				<verse number="24">ಹೀಗೆ ಮನುಷ್ಯನು ನಂಬಿಕೆಯಿಂದ ಮಾತ್ರವಲ್ಲ ಕ್ರಿಯೆಗಳಿಂದಲೂ ನೀತಿವಂತನೆಂದು ನಿರ್ಣಯ ಹೊಂದುತ್ತಾನೆ ಎಂದು ನೀವು ನೋಡುತ್ತೀರಿ.</verse>
				<verse number="25">ಅದೇ ರೀತಿಯಾಗಿ ರಹಾಬಳೆಂಬ ವೇಶ್ಯೆಯು ಸಹ ಗೂಢಚಾರರನ್ನು ಸೇರಿಸಿಕೊಂಡು, ಅವರನ್ನು ಬೇರೆ ದಾರಿಯಿಂದ ಕಳುಹಿಸಿದ ಕ್ರಿಯೆಗಳಿಂದಲೇ ಆಕೆಯು ನೀತಿನಿರ್ಣಯವನ್ನು ಹೊಂದಿದಳಲ್ಲವೇ?</verse>
				<verse number="26">ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ, ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದಾಗಿರುತ್ತದೆ.</verse>
			</chapter>
			<chapter number="3">
				<verse number="1">ನನ್ನ ಪ್ರಿಯರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವುದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.</verse>
				<verse number="2">ಏಕೆಂದರೆ ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುವುದುಂಟು. ಒಬ್ಬನು ಮಾತಿನಲ್ಲಿ ತಪ್ಪದಿದ್ದರೆ, ಅವನು ಪರಿಪೂರ್ಣನೂ ತನ್ನ ಇಡೀ ದೇಹವನ್ನೇ ಸ್ವಾಧೀನದಲ್ಲಿಟ್ಟುಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.</verse>
				<verse number="3">ಕುದುರೆಗಳು ನಮಗೆ ವಿಧೇಯವಾಗುವ ಹಾಗೆ ಅವುಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ, ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವುದಕ್ಕೆ ಆಗುತ್ತದೆ.</verse>
				<verse number="4">ಹಡಗುಗಳ ಉದಾಹರಣೆಯೂ ಅದರಂತೆ ಇದೆ. ಅವು ಬಹು ದೊಡ್ಡವಾಗಿದ್ದರೂ ಬಲವಾದ ಗಾಳಿಯಿಂದ ಬಡಿಸಿಕೊಂಡು ಹೋಗುತ್ತವೆ. ಆದರೂ ಬಹು ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ನಡೆಸುವವನು ತನ್ನ ಮನಸ್ಸಿಗೆ ಬಂದ ಕಡೆಗೆ ಅವುಗಳನ್ನು ತಿರುಗಿಸುತ್ತಾನೆ.</verse>
				<verse number="5">ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಒಂದು ಸಣ್ಣ ಬೆಂಕಿ ಕಿಡಿಯು ದೊಡ್ಡಕಾಡನ್ನೇ ಸುಟ್ಟುಬಿಡುತ್ತದೆ ನೋಡಿರಿ.</verse>
				<verse number="6">ನಮ್ಮ ದೇಹದ ಅಂಗಗಳಲ್ಲಿ ನಾಲಿಗೆಯು ಸಹ ಬೆಂಕಿಯೂ ದುಷ್ಟ ಲೋಕವೂ ಆಗಿದೆ. ಹೀಗೆ ನಾಲಿಗೆಯು ನಮ್ಮ ಅಂಗಗಳಲ್ಲಿ ಇದ್ದು, ಇಡೀ ದೇಹವನ್ನೆಲ್ಲಾ ಮಲಿನಗೊಳಿಸುತ್ತದೆ. ಅದು ನರಕದ ಬೆಂಕಿಯಿಂದ ಹೊತ್ತಿಕೊಂಡು, ಮಾನವರ ಇಡೀ ಜೀವನಕ್ಕೆ ಬೆಂಕಿ ಹಚ್ಚುವದಾಗಿದೆ.</verse>
				<verse number="7">ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಮಾನವರು ಹತೋಟಿಗೆ ತರುತ್ತಾರೆ ಮತ್ತು ತಂದಿದ್ದಾರೆ.</verse>
				<verse number="8">ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿಕೊಂಡಿದೆ.</verse>
				<verse number="9">ಅದೇ ನಾಲಿಗೆಯಿಂದ ನಮ್ಮ ತಂದೆಯಾದ ಕರ್ತದೇವರನ್ನು ಕೊಂಡಾಡುತ್ತೇವೆ, ಅದರಿಂದಲೇ ದೇವರ ಹೋಲಿಕೆಗೆ ಸರಿಯಾಗಿ ಸೃಷ್ಟಿಸಲಾದ ಮನುಷ್ಯರನ್ನು ನಾವು ಶಪಿಸುತ್ತೇವೆ.</verse>
				<verse number="10">ಅದೇ ಬಾಯಿಂದ ಸ್ತುತಿ ಮತ್ತು ಶಾಪ ಬರುತ್ತವೆ. ನನ್ನ ಪ್ರಿಯರೇ, ಇವುಗಳು ಹೀಗಿರಬಾರದು.</verse>
				<verse number="11">ಒಂದೇ ಬುಗ್ಗೆಯಿಂದ ಸಿಹಿನೀರನ್ನೂ ಉಪ್ಪುನೀರನ್ನೂ ಒಂದೇ ಸ್ಥಳದಿಂದ ಹೊರಡಿಸುವುದುಂಟೇ?</verse>
				<verse number="12">ನನ್ನ ಪ್ರಿಯರೇ, ಅಂಜೂರದ ಮರವು ಎಣ್ಣೇಮರದ ಕಾಯನ್ನು ಬಿಡುವುದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಉಪ್ಪುನೀರಿನ ಬುಗ್ಗೆಯು ಸಿಹಿನೀರನ್ನು ಕೊಡಲು ಎಂದಿಗೂ ಸಾಧ್ಯವಿಲ್ಲ.</verse>
				<verse number="13">ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಜ್ಞಾನದಿಂದ ಬರುವ ದೀನತ್ವದಲ್ಲಿ ತನ್ನ ಕ್ರಿಯೆಗಳನ್ನು ಒಳ್ಳೆಯ ಜೀವನದಿಂದ ತೋರಿಸಲಿ.</verse>
				<verse number="14">ನಿಮ್ಮ ಹೃದಯದೊಳಗೆ ಕಹಿಯಾದ ಹಗೆತನವನ್ನೂ ಸ್ವಾರ್ಥ ಉದ್ದೇಶವನ್ನು ಕೂಡಿಟ್ಟು ಕೊಂಡಿರುವಲ್ಲಿ, ನೀವು ಜ್ಞಾನದ ಕುರಿತು ಹೊಗಳಿಕೊಳ್ಳಬೇಡಿರಿ ಮತ್ತು ಸತ್ಯವನ್ನು ನಿರಾಕರಿಸಬೇಡಿರಿ.</verse>
				<verse number="15">ಅಂಥ ಜ್ಞಾನವು ದೈವಿಕ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು. ಅದು ಆತ್ಮಿಕವಾದದ್ದಲ್ಲ. ಅದು ದೆವ್ವಗಳಿಗೆ ಸಂಬಂಧಪಟ್ಟದ್ದು.</verse>
				<verse number="16">ಏಕೆಂದರೆ ನಿಮ್ಮಲ್ಲಿ ಹೊಟ್ಟೆಕಿಚ್ಚೂ ಸ್ವಾರ್ಥ ಉದ್ದೇಶವೂ ಇರುವಲ್ಲಿ ಗಲಿಬಿಲಿಯೂ ಸಕಲ ವಿಧವಾದ ಕೆಟ್ಟ ಅಭ್ಯಾಸವೂ ಇರುತ್ತವೆ.</verse>
				<verse number="17">ಆದರೆ ಸ್ವರ್ಗೀಯ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಅಧೀನವಾದದ್ದು, ಕರುಣೆಯಿಂದ ತುಂಬಿದ್ದು ಒಳ್ಳೆಯ ಫಲವನ್ನು ಕೊಡುವಂಥದ್ದು ಆಗಿದೆ. ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.</verse>
				<verse number="18">ಸಮಾಧಾನ ಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುತ್ತಾರೆ.</verse>
			</chapter>
			<chapter number="4">
				<verse number="1">ನಿಮ್ಮಲ್ಲಿ ಯುದ್ಧಗಳೂ ಕಾದಾಟಗಳೂ ಬರಲು ಕಾರಣಗಳೇನು? ನಿಮ್ಮಲ್ಲಿ ಹೋರಾಡುವ ದುರಾಶೆಗಳಿಂದ ಅಲ್ಲವೇ?</verse>
				<verse number="2">ನೀವು ಬಯಸಿದರೂ ಪಡೆಯದೆ ಇದ್ದುದರಿಂದ ನೀವು ಕೊಲ್ಲುತ್ತೀರಿ. ದುರಾಶೆಯಿಂದ ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ ಮತ್ತು ಯುದ್ಧ ಮಾಡುತ್ತೀರಿ, ಆದರೂ ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.</verse>
				<verse number="3">ನೀವು ಬೇಡಿದರೂ ಬೇಡಿದ್ದನ್ನು ಪಡೆದುಕೊಳ್ಳುವುದಿಲ್ಲ. ಏಕೆಂದರೆ, ನಿಮ್ಮ ಭೋಗಗಳಿಗಾಗಿ ಉಪಯೋಗಿಸಬೇಕೆಂದು ದುರುದ್ದೇಶಕ್ಕಾಗಿ ಬೇಡಿಕೊಳ್ಳುವುದರಿಂದ ನಿಮಗೆ ದೊರೆಯುವುದಿಲ್ಲ.</verse>
				<verse number="4">ವ್ಯಭಿಚಾರಿಗಳೇ, ಇಹಲೋಕ ಸ್ನೇಹವು ದೇವರೊಂದಿಗಿರುವ ಶತ್ರುತ್ವ ಎಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರಬೇಕೆಂಬುವವನು ದೇವರಿಗೆ ಶತ್ರುವಾಗಿದ್ದಾನೆ.</verse>
				<verse number="5">ಅಥವಾ ದೇವರು ನಮ್ಮಲ್ಲಿ ವಾಸವಾಗಿರಲು ನಮಗೆ ಕೊಟ್ಟಿರುವ ಪವಿತ್ರಾತ್ಮ ದೇವರು, ನಾವು ಅವರಿಗೆ ಮಾತ್ರ ಸೇರಿದವರಾಗಿರಬೇಕೆಂದು ಬಲವಾದ ಬಯಕೆ ಉಳ್ಳವರಾಗಿದ್ದಾರೆಂದು ಪವಿತ್ರ ವೇದವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸುತ್ತೀರೋ?</verse>
				<verse number="6">ಆದರೆ ದೇವರು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾರೆ. ಆದ್ದರಿಂದ ಈ ಕಾರಣಕ್ಕಾಗಿ, ಪವಿತ್ರ ವೇದವು: “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ. ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ,” ಎಂದು ಹೇಳುತ್ತದೆ.</verse>
				<verse number="7">ಹೀಗಿರಲಾಗಿ ದೇವರಿಗೆ ಅಧೀನವಾಗಿರಿ. ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು.</verse>
				<verse number="8">ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.</verse>
				<verse number="9">ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ, ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ.</verse>
				<verse number="10">ಕರ್ತದೇವರ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆಗ ಅವರು ನಿಮ್ಮನ್ನು ಮೇಲಕ್ಕೆತ್ತುವರು.</verse>
				<verse number="11">ಪ್ರಿಯರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತೀರ್ಪುಮಾಡಿದರೆ ಅವನು ದೇವರ ನಿಯಮದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ, ನಿಯಮವನ್ನೇ ತೀರ್ಪುಮಾಡಿದ ಹಾಗಾಗುವುದು. ಆದರೆ ನೀನು ದೇವರ ನಿಯಮವನ್ನೇ ತೀರ್ಪುಮಾಡಿದರೆ ನೀನು ಅನುಸರಿಸುವವನಾಗಿರದೆ ನ್ಯಾಯಾಧಿಪತಿಯೆನಿಸಿಕೊಳ್ಳುವಿ.</verse>
				<verse number="12">ನಿಯಮವನ್ನು ಕೊಟ್ಟವರೂ ನ್ಯಾಯಾಧಿಪತಿಯೂ ದೇವರೊಬ್ಬರೇ ಆಗಿರುತ್ತಾರೆ. ಅವರು ಉಳಿಸುವುದಕ್ಕೂ ನಾಶಮಾಡುವುದಕ್ಕೂ ಶಕ್ತರಾಗಿದ್ದಾರೆ. ಹೀಗಿರುವಾಗ ನೆರೆಯವನ ವಿಷಯದಲ್ಲಿ ತೀರ್ಪುಮಾಡುವುದಕ್ಕೆ ನೀನು ಯಾರು?</verse>
				<verse number="13">“ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರ್ಷವಿದ್ದು, ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ,” ಎನ್ನುವವರೇ ಕೇಳಿರಿ.</verse>
				<verse number="14">ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.</verse>
				<verse number="15">ಆದ್ದರಿಂದ, “ಕರ್ತದೇವರ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ, ಆ ಕೆಲಸವನ್ನಾಗಲಿ ಮಾಡುವೆವು!” ಎಂದು ನೀವು ಹೇಳುವುದೇ ಸರಿ.</verse>
				<verse number="16">ಆದರೆ ನೀವು ನಿಮ್ಮ ಹೊಗಳಿಕೆಯ ಯೋಜನೆಗಳಲ್ಲಿ ಹೆಮ್ಮೆಪಡುತ್ತೀರಿ. ಅಂಥಾ ಅಹಂಭಾವವೆಲ್ಲಾ ಕೆಟ್ಟದ್ದೆ.</verse>
				<verse number="17">ಹೀಗಿರುವುದರಿಂದ ಒಳ್ಳೆಯದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನಿಗೆ ಅದು ಪಾಪವಾಗಿದೆ.</verse>
			</chapter>
			<chapter number="5">
				<verse number="1">ಧನಿಕರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.</verse>
				<verse number="2">ನಿಮ್ಮ ಐಶ್ವರ್ಯವು ನಾಶವಾಗಿದೆ. ನಿಮ್ಮ ಬಟ್ಟೆಗಳಿಗೆ ನುಸಿಹಿಡಿದಿದೆ.</verse>
				<verse number="3">ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದಿವೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದುಬಿಡುವುದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ.</verse>
				<verse number="4">ಇಗೋ ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ. ಕೊಯಿದವರ ಕೂಗು ಸೈನ್ಯಗಳ ಅಧಿಪತಿ ಆಗಿರುವ ಕರ್ತದೇವರ ಕಿವಿಗಳಲ್ಲಿ ಬಿದ್ದಿದೆ.</verse>
				<verse number="5">ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸಿಗೆ ಬಂದಂತೆ ಜೀವಿಸಿದ್ದೀರಿ. ವಧೆಯ ದಿವಸಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.</verse>
				<verse number="6">ನಿಮ್ಮನ್ನು ವಿರೋಧ ಮಾಡದ ನಿರ್ದೋಷಿಗೆ ದಂಡನೆಯನ್ನು ವಿಧಿಸಿ, ಕೊಂದುಹಾಕಿದ್ದೀರಿ.</verse>
				<verse number="7">ಪ್ರಿಯರೇ, ಕರ್ತ ಯೇಸು ಬರುವ ತನಕ ದೀರ್ಘಶಾಂತಿಯಿಂದಿರಿ. ವ್ಯವಸಾಯಗಾರನನ್ನು ನೋಡಿರಿ. ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.</verse>
				<verse number="8">ನೀವೂ ದೀರ್ಘಶಾಂತಿಯಿಂದಿರಿ. ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ. ಏಕೆಂದರೆ ಕರ್ತ ಯೇಸುವಿನ ಪುನರಾಗಮನ ಹತ್ತಿರವಾಯಿತು.</verse>
				<verse number="9">ಪ್ರಿಯರೇ, ನೀವು ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿರಿ. ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾರೆ.</verse>
				<verse number="10">ನನ್ನ ಪ್ರಿಯರೇ, ಕರ್ತದೇವರ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯವಾಗಿ ಆದರ್ಶವಾಗಿ ಇಟ್ಟುಕೊಳ್ಳಿರಿ.</verse>
				<verse number="11">ಇಗೋ, ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ, ಕರ್ತದೇವರು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ತಿಳಿದು, ಕರ್ತದೇವರು ಬಹಳ ಒಳ್ಳೆಯವರೂ ದಯಾಳುವೂ ಆಗಿದ್ದಾರೆಂದು ತಿಳಿದಿದ್ದೀರಷ್ಟೆ.</verse>
				<verse number="12">ಮುಖ್ಯವಾಗಿ ನನ್ನ ಪ್ರಿಯರೇ, ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ನಾವುದರ ಮೇಲಾಗಲಿ ಆಣೆ ಇಡಬೇಡಿರಿ. ಹೌದೆಂದು ಹೇಳಬೇಕಾದರೆ “ಹೌದು” ಎನ್ನಿರಿ. ಇಲ್ಲವಾದರೆ “ಇಲ್ಲ” ಎನ್ನಿರಿ. ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ.</verse>
				<verse number="13">ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷ ಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.</verse>
				<verse number="14">ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯನನ್ನು ಕರೆಕಳುಹಿಸಲಿ. ಅವರು ಕರ್ತ ಯೇಸುವಿನ ಹೆಸರಿನಿಂದ ಎಣ್ಣೆ ಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ.</verse>
				<verse number="15">ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುತ್ತದೆ. ಕರ್ತ ಯೇಸು ಅವನನ್ನು ಎಬ್ಬಿಸುವರು. ಪಾಪಗಳನ್ನು ಮಾಡಿದವನಾಗಿದ್ದರೆ ಅವನು ಕ್ಷಮೆಯನ್ನು ಪಡೆಯುತ್ತಾನೆ.</verse>
				<verse number="16">ನೀವು ಸ್ವಸ್ಥವಾಗಬೇಕಾದರೆ, ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು, ಅರಿಕೆಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಪ್ರಾರ್ಥನೆಯು ಶಕ್ತಿಯುತವೂ ಪರಿಣಾಮಕಾರಿಯೂ ಆಗಿರುತ್ತದೆ.</verse>
				<verse number="17">ಎಲೀಯನು ನಮ್ಮಂಥ ಮಾನವ ಸ್ವಭಾವವುಳ್ಳವನಾಗಿದ್ದನು. ಅವನು ಮಳೆ ಬರಬಾರದೆಂದು ಆಸಕ್ತಿಯಿಂದ ಪ್ರಾರ್ಥಿಸಲು, ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.</verse>
				<verse number="18">ತಿರುಗಿ ಅವನು ಪ್ರಾರ್ಥನೆಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಫಲಿಸಿತು.</verse>
				<verse number="19">ಪ್ರಿಯರೇ, ನಿಮ್ಮಲ್ಲಿ ಯಾವನಾದರೂ ಸತ್ಯದಿಂದ ತಪ್ಪಿಹೋಗಿರಲಾಗಿ ಮತ್ತೊಬ್ಬನು ಅವನನ್ನು ಯಥಾಸ್ಥಾನಕ್ಕೆ ತಂದರೆ,</verse>
				<verse number="20">ಅವನು ಆ ಪಾಪ ಮಾಡಿದವನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ, ಅವನ ಆತ್ಮವನ್ನು ಮರಣದಿಂದಲೂ ತಪ್ಪಿಸಿ, ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲಿ.</verse>
			</chapter>
		</book>
		<book number="60">
			<chapter number="1">
				<verse number="1">ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೇತ್ರನು, ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನ್ಯ ಇವುಗಳಲ್ಲೆಲ್ಲಾ ಚದರಿರುವ, ದೇವರಿಂದ ಆಯ್ಕೆಯಾದ ಪ್ರವಾಸಿಗಳಿಗೆ,</verse>
				<verse number="2">ಪವಿತ್ರಾತ್ಮ ದೇವರ ಕಾರ್ಯದಿಂದ ಪರಿಶುದ್ಧರಾಗಿ, ಯೇಸುಕ್ರಿಸ್ತರಿಗೆ ವಿಧೇಯರಾಗಲು ಅವರ ರಕ್ತದಿಂದ ಪ್ರೋಕ್ಷಿತರಾಗುವುದಕ್ಕೂ ನಮ್ಮ ತಂದೆ ದೇವರ ಪೂರ್ವಜ್ಞಾನಾನುಸಾರವಾಗಿ ಆಯ್ಕೆಯಾದವರಿಗೆ ಬರೆಯುವುದು: ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.</verse>
				<verse number="3">ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯೂ ದೇವರೂ ಆಗಿರುವವರಿಗೆ ಸ್ತೋತ್ರವಾಗಲಿ. ಅವರು ಕ್ರಿಸ್ತ ಯೇಸುವನ್ನು ತಮ್ಮ ಮಹಾ ಕರುಣಾನುಸಾರವಾಗಿ, ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಜೀವಕರವಾದ ನಿರೀಕ್ಷೆಗೆ ನಮ್ಮನ್ನು ತಿರುಗಿ ಹುಟ್ಟಿಸಿದ್ದಾರೆ.</verse>
				<verse number="4">ಈ ನಿರೀಕ್ಷೆಯು ಲಯ, ಕಳಂಕ, ಕ್ಷಯಗಳಿಲ್ಲದ ಬಾಧ್ಯತೆಯಾಗಿದೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.</verse>
				<verse number="5">ಅಂತ್ಯಕಾಲದಲ್ಲಿ ಪ್ರಕಟವಾಗುವುದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ದೇವರು ನಿಮ್ಮ ನಂಬಿಕೆಯ ಮುಖಾಂತರ ನಿಮ್ಮನ್ನು ತಮ್ಮ ಶಕ್ತಿಯಿಂದ ಕಾಯುತ್ತಾರೆ.</verse>
				<verse number="6">ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.</verse>
				<verse number="7">ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.</verse>
				<verse number="8">ನೀವು ಕ್ರಿಸ್ತ ಯೇಸುವನ್ನು ನೋಡಲಿಲ್ಲವಾದರೂ ಅವರನ್ನು ಪ್ರೀತಿಸುತ್ತೀರಿ. ನೀವು ಈಗ ಅವರನ್ನು ಕಾಣದಿದ್ದರೂ ಅವರಲ್ಲಿ ನಂಬಿಕೆಯಿಟ್ಟು ವ್ಯಕ್ತಪಡಿಸಲಾಗದಂಥ ಪ್ರಭಾವವುಳ್ಳ ಸಂತೋಷದಿಂದ ಹರ್ಷಿಸುತ್ತೀರಿ.</verse>
				<verse number="9">ಏಕೆಂದರೆ ನಿಮ್ಮ ನಂಬಿಕೆಯ ಅಂತಿಮ ಫಲವಾಗಿರುವ ಆತ್ಮಗಳ ರಕ್ಷಣೆಯನ್ನು ಹೊಂದುವವರಾಗಿದ್ದೀರಿ.</verse>
				<verse number="10">ನಿಮಗೆ ಬರಬೇಕಾಗಿದ್ದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು, ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.</verse>
				<verse number="11">ಅವರಲ್ಲಿದ್ದ ಕ್ರಿಸ್ತ ಯೇಸುವಿನ ಆತ್ಮ, ಕ್ರಿಸ್ತ ಯೇಸುವಿಗೆ ಸಂಭವಿಸಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಮಹಿಮೆಗಳನ್ನೂ ಪ್ರವಾದಿಸಿದಾಗ, ಅದರ ಸಮಯ ಸಂದರ್ಭಗಳನ್ನು ಕಂಡುಹಿಡಿಯಲು ಪರಿಶೋಧನೆ ಮಾಡಿದರು.</verse>
				<verse number="12">ತಮಗೋಸ್ಕರವಲ್ಲ ಆದರೆ ನಿಮಗೋಸ್ಕರ ಸೇವೆಮಾಡಿದರೆಂದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು, ಪರಲೋಕದಿಂದ ಕಳುಹಿಸಲಾದ ಪವಿತ್ರಾತ್ಮ ದೇವರಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ಪ್ರಸಿದ್ಧಿಮಾಡಲಾಗಿದೆ. ದೇವದೂತರು ಸಹ ಈ ಸಂಗತಿಗಳನ್ನು ಕಣ್ಣಿಟ್ಟು ನೋಡಬೇಕೆಂದು ಅಪೇಕ್ಷಿಸುತ್ತಾರೆ.</verse>
				<verse number="13">ಆದ್ದರಿಂದ, ನೀವು ನಿಮ್ಮ ಮನಸ್ಸನ್ನು ಸಿದ್ಧಮಾಡಿಕೊಂಡು, ಸ್ವಸ್ಥಚಿತ್ತರಾಗಿದ್ದು ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಅಂತ್ಯದವರೆಗೆ ಇಡಿರಿ.</verse>
				<verse number="14">ವಿಧೇಯರಾದ ಮಕ್ಕಳಿಗೆ ತಕ್ಕಂತೆ, ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮ್ಮ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರಬೇಡಿರಿ.</verse>
				<verse number="15">ಆದರೆ ನಿಮ್ಮನ್ನು ಕರೆದಿರುವ ದೇವರು ಪರಿಶುದ್ಧರಾಗಿರುವ ಪ್ರಕಾರವೇ ನಿಮ್ಮ ಎಲ್ಲಾ ನಡವಳಿಕೆಯಲ್ಲಿ ಪರಿಶುದ್ಧರಾಗಿರಿ.</verse>
				<verse number="16">ಏಕೆಂದರೆ, “ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು,” ಎಂದು ಪವಿತ್ರ ವೇದದಲ್ಲಿ ಬರೆದಿದೆ.</verse>
				<verse number="17">ಪ್ರತಿಯೊಬ್ಬನ ಕೆಲಸವನ್ನು ಪಕ್ಷಪಾತವಿಲ್ಲದೆ ತೀರ್ಪುಮಾಡುವ ದೇವರನ್ನು ನೀವು ತಂದೆಯೆಂದು ಬೇಡಿಕೊಳ್ಳುವವರಾಗಿದ್ದು ನಿಮ್ಮ ಪ್ರವಾಸಕಾಲವನ್ನು ಭಯಭಕ್ತಿಯಿಂದ ಕಳೆಯಿರಿ.</verse>
				<verse number="18">ನಿಮ್ಮ ಪೂರ್ವಿಕರಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿ, ಬಂಗಾರದಿಂದಲ್ಲ.</verse>
				<verse number="19">ಅದು ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯಾಗಿರುವ ಕ್ರಿಸ್ತ ಯೇಸುವಿನ ಅಮೂಲ್ಯ ರಕ್ತದಿಂದಲೇ.</verse>
				<verse number="20">ಅವರು ಜಗದುತ್ಪತ್ತಿಗೆ ಮೊದಲೇ ನೇಮಕಗೊಂಡು ಈ ಅಂತ್ಯಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷರಾದರು.</verse>
				<verse number="21">ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿ ಅವರಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಕ್ರಿಸ್ತ ಯೇಸುವಿನ ಮೂಲಕ ವಿಶ್ವಾಸವಿಟ್ಟಿದ್ದೀರಿ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರಲಿ.</verse>
				<verse number="22">ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.</verse>
				<verse number="23">ಏಕೆಂದರೆ ನೀವು ತಿರುಗಿ ಹುಟ್ಟಿದವರಾಗಿದ್ದೀರಲ್ಲಾ! ಆ ಜನ್ಮವು ನಾಶವಾಗುವ ಬೀಜದಿಂದಲ್ಲ. ಆದರೆ ನಾಶವಾಗದಂಥದ್ದರಿಂದ ಸಜೀವವಾದ ಸದಾಕಾಲವಿರುವ ದೇವರ ವಾಕ್ಯದ ಮೂಲಕ ಆಗಿದೆ.</verse>
				<verse number="24">“ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯರ ಪ್ರಭಾವವೆಲ್ಲಾ ಹೊಲದ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು. ಅದರ ಹೂವು ಉದುರಿ ಹೋಗುವುದು.</verse>
				<verse number="25">ಕರ್ತದೇವರ ವಾಕ್ಯವಾದರೋ ಸದಾಕಾಲ ಇರುವುದು.” ಇದೇ ನಿಮಗೆ ಸಾರಲಾದ ಸುವಾರ್ತಾವಾಕ್ಯವು.</verse>
			</chapter>
			<chapter number="2">
				<verse number="1">ಆದಕಾರಣ, ಎಲ್ಲಾ ದ್ವೇಷವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ ಎಲ್ಲಾ ಅಪವಾದಗಳನ್ನೂ ವಿಸರ್ಜಿಸಿರಿ.</verse>
				<verse number="2">ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ರಕ್ಷಣೆಯಲ್ಲಿ ಬೆಳೆಯುವ ಹಾಗೆ ಆತ್ಮಿಕವಾದ ಶುದ್ಧಹಾಲನ್ನು ಬಯಸಿರಿ.</verse>
				<verse number="3">ಏಕೆಂದರೆ ಕರ್ತದೇವರು ಒಳ್ಳೆಯವರೆಂದು ನೀವು ರುಚಿ ನೋಡಿದ್ದೀರಲ್ಲಾ.</verse>
				<verse number="4">ನೀವು ಸಜೀವ ಕಲ್ಲಾಗಿರುವವರ ಬಳಿಗೆ ಬಂದಿದ್ದೀರಿ. ಆ ಕಲ್ಲು ಮನುಷ್ಯರಿಂದ ನಿರಾಕರಿಸಿದರೂ ಅದು ದೇವರಿಂದ ಆರಿಸಿಕೊಂಡದ್ದೂ ಅವರಿಗೆ ಅಮೂಲ್ಯವಾದದ್ದೂ ಆಯಿತು.</verse>
				<verse number="5">ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಿಕ ಮಂದಿರವಾಗುವುದಕ್ಕೆ ನಿರ್ಮಿತವಾಗುತ್ತಾ ಇದ್ದೀರಿ. ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮಿಕ ಯಜ್ಞಗಳನ್ನು ಸಮರ್ಪಿಸಲು ನೀವು ಪವಿತ್ರ ಯಾಜಕವರ್ಗದವರಾಗಬೇಕು.</verse>
				<verse number="6">ಪವಿತ್ರ ವೇದವು ಹೇಳುವುದೇನೆಂದರೆ: “ಇಗೋ, ಚೀಯೋನಿನಲ್ಲಿ ಮೂಲೆಗಲ್ಲನ್ನು ಇಡುತ್ತೇನೆ. ಅದು ಆರಿಸಿಕೊಂಡದ್ದು, ಅಮೂಲ್ಯವಾದದ್ದು. ದೇವರ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ.”</verse>
				<verse number="7">ಈಗ ನಂಬುವವರಾದ ನಿಮಗೆ ಈ ಕಲ್ಲು ಅಮೂಲ್ಯವಾದುದು. ನಂಬದವರಿಗಾದರೋ, “ಮನೆ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು,”</verse>
				<verse number="8">ಮತ್ತು, “ಜನರು ಎಡವಲು ಕಾರಣವಾಗುವ ಕಲ್ಲೂ ಅವರು ಬಿದ್ದುಹೋಗುವಂತೆ ಮಾಡುವ ಬಂಡೆಯೂ ಆಗಿರುತ್ತದೆ,” ಅವರು ವಾಕ್ಯಕ್ಕೆ ಅವಿಧೇಯರಾದ್ದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.</verse>
				<verse number="9">ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.</verse>
				<verse number="10">ಮೊದಲು ನೀವು ಪ್ರಜೆಗಳಾಗಿರಲಿಲ್ಲ. ಈಗ ದೇವರ ಪ್ರಜೆಗಳಾಗಿದ್ದೀರಿ. ಮೊದಲು ಕರುಣೆ ಹೊಂದಿರಲಿಲ್ಲ. ಈಗ ಕರುಣೆ ಹೊಂದಿದ್ದೀರಿ.</verse>
				<verse number="11">ಪ್ರಿಯರೇ, ಈ ಲೋಕದಲ್ಲಿ ಪರದೇಶಸ್ಥರೂ ಪ್ರವಾಸಿಗಳೂ ಆಗಿರುವ ನೀವು ನಿಮ್ಮ ಆತ್ಮಕ್ಕೆ ವಿರೋಧವಾಗಿ ಯುದ್ಧಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.</verse>
				<verse number="12">ನಿಮ್ಮ ನಡವಳಿಕೆಯು ಯೆಹೂದ್ಯರಲ್ಲದವರ ನಡುವೆ ಯೋಗ್ಯವಾಗಿರಲಿ, ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ, ಆ ನಿಮ್ಮ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ಕರ್ತ ಯೇಸು ನಮ್ಮನ್ನು ದರ್ಶಿಸುವ ದಿನದಲ್ಲಿ ಅವರು ದೇವರನ್ನು ಕೊಂಡಾಡುವರು.</verse>
				<verse number="13">ಮನುಷ್ಯನ ಪ್ರತಿಯೊಂದು ನಿಯಮಗಳಿಗೂ ಕರ್ತದೇವರ ನಿಮಿತ್ತ ನೀವು ಅಧೀನರಾಗಿರಿ. ಅರಸನು ಸರ್ವಾಧಿಕಾರಿಯಾಗಿದ್ದು,</verse>
				<verse number="14">ರಾಜ್ಯಪಾಲರು ಕೆಟ್ಟವರನ್ನು ದಂಡಿಸುವುದಕ್ಕೆ ಒಳ್ಳೆಯವರನ್ನು ಪ್ರೋತ್ಸಾಹಪಡಿಸುವುದಕ್ಕೆ ಅರಸನಿಂದ ಅವರು ಕಳುಹಿಸಲಾದವರೆಂದೂ ತಿಳಿದು ಅವರಿಗೆ ಅಧೀನರಾಗಿರಿ.</verse>
				<verse number="15">ನೀವು ನಿಮ್ಮ ಒಳ್ಳೆಯ ನಡತೆಯಿಂದ, ತಿಳುವಳಿಕೆಯಿಲ್ಲದೆ ಮಾತಾಡುವ ಮೂಢಜನರ ಬಾಯಿ ಮುಚ್ಚುವಂತೆ ಮಾಡುವುದೇ ದೇವರ ಚಿತ್ತ.</verse>
				<verse number="16">ಸ್ವತಂತ್ರರಾಗಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ. ದೇವರ ಸೇವಕರಂತೆಯೇ ಬಾಳಿರಿ.</verse>
				<verse number="17">ಎಲ್ಲರನ್ನು ಸನ್ಮಾನಿಸಿರಿ, ವಿಶ್ವಾಸಿಗಳ ಸಹೋದರತ್ವವನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ, ಅರಸನನ್ನು ಸನ್ಮಾನಿಸಿರಿ.</verse>
				<verse number="18">ದಾಸರೇ, ಯಜಮಾನರಿಗೆ ಅಧೀನರಾಗಿರಿ. ನೀವು ಅವರಲ್ಲಿ ಒಳ್ಳೆಯ ಯಜಮಾನರಿಗೆ ಮಾತ್ರವಲ್ಲ, ಕ್ರೂರ ಯಜಮಾನರಿಗೂ ಪೂರ್ಣಭಯಭಕ್ತಿಯಿಂದ ಅಧೀನರಾಗಿರಿ.</verse>
				<verse number="19">ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರ ವಿಷಯವಾದ ಮನಸ್ಸಾಕ್ಷಿಗೋಸ್ಕರ ಆ ದುಃಖವನ್ನು ಸಹಿಸಿಕೊಂಡರೆ ಅವನು ದೇವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.</verse>
				<verse number="20">ತಪ್ಪುಮಾಡಿ ಶಿಕ್ಷೆ ಹೊಂದುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದರಿಂದೇನು ಹೆಚ್ಚಳ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ತಾಳ್ಮೆಯಿಂದಿದ್ದರೆ ಇದು ದೇವರಿಗೆ ಮೆಚ್ಚುಗೆಯಾಗಿದೆ.</verse>
				<verse number="21">ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು: ಕ್ರಿಸ್ತ ಯೇಸು ಸಹ ನಮಗೋಸ್ಕರ ಬಾಧೆಯನ್ನು ಅನುಭವಿಸಿ ತಮ್ಮ ಹೆಜ್ಜೆಯ ಜಾಡಿನಲ್ಲಿ ನೀವು ನಡೆಯಬೇಕೆಂದು ಆದರ್ಶವನ್ನು ಬಿಟ್ಟುಹೋದರು.</verse>
				<verse number="22">“ಕ್ರಿಸ್ತ ಯೇಸುವು ಯಾವ ಪಾಪವನ್ನೂ ಮಾಡಲಿಲ್ಲ, ಅವರ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.”</verse>
				<verse number="23">ಬೈಯ್ಯುವವರನ್ನು ಅವರು ಪ್ರತಿಯಾಗಿ ಬೈಯಲಿಲ್ಲ. ಅವರು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವ ತಂದೆಗೆ ತಮ್ಮನ್ನು ಒಪ್ಪಿಸಿದರು.</verse>
				<verse number="24">ನಾವು ನಮ್ಮ ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಕ್ರಿಸ್ತ ಯೇಸು ಶಿಲುಬೆಯ ಮೇಲೆ, “ನಮ್ಮ ಪಾಪಗಳನ್ನು ತಾವೇ ತಮ್ಮ ದೇಹದಲ್ಲಿ ಹೊತ್ತರು. ಅವರ ಗಾಯಗಳಿಂದ ನಿಮಗೆ ಗುಣವಾಯಿತು.”</verse>
				<verse number="25">ಏಕೆಂದರೆ, “ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ.” ಆದರೆ ಈಗ ನೀವು ತಿರುಗಿ ನಿಮ್ಮ ಆತ್ಮಗಳ ಕುರುಬ ಹಾಗೂ ಸಭಾಧ್ಯಕ್ಷರೂ ಆಗಿರುವ ಕ್ರಿಸ್ತ ಯೇಸುವಿನ ಬಳಿಗೆ ಬಂದಿದ್ದೀರಿ.</verse>
			</chapter>
			<chapter number="3">
				<verse number="1">ಅದೇ ರೀತಿಯಾಗಿ ಪತ್ನಿಯರೇ, ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. ಪತಿಯರಲ್ಲಿ ಯಾರಾದರೂ ವಾಕ್ಯವನ್ನು ಸ್ವೀಕರಿಸದವರಾಗಿದ್ದರೂ ಪತ್ನಿಯರ ನಡತೆಯಿಂದ ವಾಕ್ಯವಿಲ್ಲದೆ ಅವರನ್ನು ಗೆಲ್ಲುವಂತೆ,</verse>
				<verse number="2">ನೀವು ನಿರ್ಮಲರಾಗಿಯೂ ಭಯಭರಿತರಾಗಿಯೂ ನಡೆದುಕೊಳ್ಳುವದನ್ನು ಅವರು ನೋಡಲಿ.</verse>
				<verse number="3">ವಿಚಿತ್ರವಾಗಿ ಜಡೆ ಹೆಣೆದುಕೊಳ್ಳುವುದೂ ಚಿನ್ನದ ಒಡವೆಗಳನ್ನು ಇಟ್ಟುಕೊಳ್ಳುವುದೂ ಇಲ್ಲವೆ ತುಂಬಾ ಬೆಲೆಯ ಉಡಿಗೆಗಳನ್ನು ಧರಿಸಿಕೊಳ್ಳುವುದೂ ಇವೇ ನಿಮ್ಮ ಅಲಂಕಾರವಾಗಿರಬಾರದು.</verse>
				<verse number="4">ಅದರ ಬದಲು ಸಾತ್ವಿಕವಾದ ಶಾಂತಮನಸ್ಸು ಎಂಬ ಹೃದಯದ ಆಂತರ್ಯದ ಅಲಂಕಾರವೇ ನಿಮ್ಮದಾಗಿರಲಿ. ಇದು ದೇವರ ದೃಷ್ಟಿಗೆ ಬಹು ಅಮೂಲ್ಯವಾದದ್ದಾಗಿದೆ.</verse>
				<verse number="5">ಪೂರ್ವಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯಿಟ್ಟ ಪರಿಶುದ್ಧ ಸ್ತ್ರೀಯರು ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡರು. ಅವರು ತಮ್ಮ ತಮ್ಮ ಪತಿಯರಿಗೆ ಅಧೀನರಾಗಿದ್ದರು.</verse>
				<verse number="6">ಹಾಗೆಯೇ ಸಾರಳು ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು “ಯಜಮಾನ” ಎಂದು ಕರೆದಳು. ನೀವು ಸಾರಳ ಪುತ್ರಿಯರಾಗಿದ್ದೀರಲ್ಲಾ. ನೀವು ಒಳ್ಳೆಯದು ಯಾವುದೋ ಅದನ್ನು ಮಾಡುವುದಾದರೆ ಯಾವುದಕ್ಕೂ ಭಯಪಡಬೇಕಾಗಿರುವುದಿಲ್ಲ.</verse>
				<verse number="7">ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಬಲಹೀನಳೆಂಬುದನ್ನು ತಿಳಿದು ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ಇರಿ. ಅವರು ಜೀವ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವುದಿಲ್ಲ.</verse>
				<verse number="8">ಕಡೆಗೆ ನೀವೆಲ್ಲರೂ ಏಕ ಮನಸ್ಸುಳ್ಳವರಾಗಿರಿ, ಒಬ್ಬರಿಗೊಬ್ಬರೂ ಕರುಣೆಯುಳ್ಳವರಾಗಿದ್ದು ಸಹೋದರರಂತೆ ಪ್ರೀತಿಸಿರಿ. ಕನಿಕರವೂ ದೀನತೆ ಉಳ್ಳವರಾಗಿರಿ,</verse>
				<verse number="9">ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನೂ ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದರಲ್ಲವೇ? ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರೆಂದು ನಿಮಗೆ ತಿಳಿದಿದೆಯಲ್ಲಾ.</verse>
				<verse number="10">“ಬಾಳನ್ನು ಪ್ರೀತಿಸಿ ಸುದಿನಗಳನ್ನು ನೋಡುವುದಕ್ಕೆ ಇಷ್ಟವುಳ್ಳವನು ಕೆಟ್ಟದ್ದನ್ನು ನುಡಿಯದಂತೆ ತನ್ನ ನಾಲಿಗೆಯನ್ನೂ ವಂಚನೆಯ ಮಾತುಗಳನ್ನಾಡದ ಹಾಗೆ ತನ್ನ ತುಟಿಗಳನ್ನೂ ಬಿಗಿ ಹಿಡಿಯಲಿ.</verse>
				<verse number="11">ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನು ಮಾಡಲಿ. ಸಮಾಧಾನವನ್ನು ಹುಡುಕಿ ಅದಕ್ಕೋಸ್ಕರ ಪ್ರಯತ್ನಪಡಲಿ.</verse>
				<verse number="12">ಏಕೆಂದರೆ ನೀತಿವಂತರ ಮೇಲೆ ಕರ್ತದೇವರು ದೃಷ್ಟಿ ಇಡುತ್ತಾರೆ. ಅವರ ಪ್ರಾರ್ಥನೆಗಳಿಗೆ ಕರ್ತದೇವರು ಕಿವಿಗೊಡುತ್ತಾರೆ. ಆದರೆ ಕೆಟ್ಟದ್ದನ್ನು ಮಾಡುವವರಿಗೆ ದೇವರು ವಿಮುಖರಾಗಿದ್ದಾರೆ,” ಎಂದು ಪವಿತ್ರ ವೇದದಲ್ಲಿ ಬರೆದಿದೆಯಲ್ಲಾ?</verse>
				<verse number="13">ನೀವು ಒಳ್ಳೆಯದನ್ನು ಅನುಸರಿಸಲು ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?</verse>
				<verse number="14">ನೀವು ನೀತಿಯ ನಿಮಿತ್ತವೇ ಬಾಧೆಪಟ್ಟರೆ ನಿಮಗೆ ಆಶೀರ್ವಾದವಿರುವುದು. ಅವರ ಬೆದರಿಕೆಗೆ ಹೆದರಬೇಡಿರಿ ಮತ್ತು ಕಳವಳಪಡಬೇಡಿರಿ.</verse>
				<verse number="15">ಆದರೆ ಕ್ರಿಸ್ತ ಯೇಸುವನ್ನು ನಿಮ್ಮ ಹೃದಯಗಳಲ್ಲಿ “ಕರ್ತದೇವರು” ಎಂದು ಪ್ರತಿಷ್ಠೆ ಪಡಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೇನೆಂದು ಕೇಳುವವರೆಲ್ಲರಿಗೆ ಸಾತ್ವಿಕತ್ವದಿಂದಲೂ ಗೌರವದಿಂದಲೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧವಾಗಿರಿ.</verse>
				<verse number="16">ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ. ಆಗ ನೀವು ಕೆಟ್ಟದ್ದನ್ನು ಮಾಡುವವರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಒಳ್ಳೆಯ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೊಳ್ಳುವರು.</verse>
				<verse number="17">ಕೆಟ್ಟನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತ ಒಳ್ಳೆಯ ನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವುದು ಲೇಸು.</verse>
				<verse number="18">ಕ್ರಿಸ್ತ ಯೇಸುವು ನೀತಿವಂತರಾಗಿದ್ದರೂ ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವುದಕ್ಕಾಗಿ, ಒಂದೇ ಸಾರಿ ಪಾಪಗಳಿಗೋಸ್ಕರ ಬಾಧೆಪಟ್ಟು ಶರೀರದಲ್ಲಿ ಮರಣಹೊಂದಿದರು. ಆದರೆ ಆತ್ಮದಲ್ಲಿ ಬದುಕುವವರಾದರು.</verse>
				<verse number="19">ಹೀಗೆ ಕ್ರಿಸ್ತ ಯೇಸುವು ಆತ್ಮರೂಪದಲ್ಲಿ ಬದುಕುವವರಾಗಿ, ಸೆರೆಯಲ್ಲಿದ್ದ ಅವಿಧೇಯ ಆತ್ಮಗಳ ಬಳಿಗೆ ಹೋಗಿ ಸಾರಿದರು.</verse>
				<verse number="20">ಅಂದರೆ, ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು, ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ, ಆ ನಾವೆಯೊಳಗೆ ಎಂಟೇ ಜನರು ನೀರಿನಿಂದ ಸಂರಕ್ಷಣೆ ಹೊಂದಿದರು.</verse>
				<verse number="21">ಈ ನೀರು ದೀಕ್ಷಾಸ್ನಾನವನ್ನು ಸೂಚಿಸುವಂತದ್ದಾಗಿದೆ. ಈ ದೀಕ್ಷಾಸ್ನಾನ ಕ್ರಿಸ್ತ ಯೇಸುವಿನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿಯು ಬೇಕೆಂದು ದೇವರನ್ನು ಬೇಡಿಕೊಳ್ಳುವಂಥದ್ದಾಗಿದೆ.</verse>
				<verse number="22">ಕ್ರಿಸ್ತ ಯೇಸು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾರೆ, ದೇವದೂತರೂ ಪ್ರಭುತ್ವಗಳೂ ಅಧಿಕಾರಗಳೂ ಅವರಿಗೆ ಅಧೀನವಾಗಿವೆ.</verse>
			</chapter>
			<chapter number="4">
				<verse number="1">ಆದ್ದರಿಂದ ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಮಾಂಸದಲ್ಲಿ ಬಾಧೆಪಟ್ಟದ್ದರಿಂದ ನೀವು ಸಹ ಅವರಿಗಿದ್ದ ಮನೋಭಾವವನ್ನು ಧರಿಸಿಕೊಳ್ಳಿರಿ. ಏಕೆಂದರೆ ಮಾಂಸದಲ್ಲಿ ಬಾಧೆಪಟ್ಟವರು ಪಾಪಮಾಡುವುದನ್ನು ನಿಲ್ಲಿಸಿಬಿಡುವರು.</verse>
				<verse number="2">ಅಂಥವರು ಉಳಿದಿರುವ ತಮ್ಮ ಭೂಲೋಕದ ಬಾಳಲ್ಲಿ ಮನುಷ್ಯರ ದುರಾಶೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವರು.</verse>
				<verse number="3">ದೇವರನ್ನು ಅರಿಯದ ಜನರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಸಾಕಷ್ಟು ಮಾಡಿದ್ದೀರಿ. ಆಗ ನೀವು ಅಶ್ಲೀಲತೆ, ದುರಾಶೆಗಳು, ಕುಡುಕತನ, ಅಮಲೇರುವಿಕೆ, ದುಂದು ಔತಣಗಳು, ಅಸಹ್ಯವಾದ ವಿಗ್ರಹಾರಾಧನೆಗಳು ಇವುಗಳನ್ನು ಮಾಡುತ್ತಿದ್ದೀರಿ.</verse>
				<verse number="4">ಆದುದರಿಂದ ನಿಮ್ಮ ಹಳೆಯ ಸ್ನೇಹಿತರೊಂದಿಗೆ ನೀವು ಮುಂಚಿನಂತೆ ಹಳೆಯ ದುಷ್ಕಾರ್ಯಗಳಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.</verse>
				<verse number="5">ಅಂಥವರು ಬದುಕುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕಾಗಿ ಸಿದ್ಧವಾಗಿರುವ ದೇವರಿಗೆ ಲೆಕ್ಕ ಕೊಡಬೇಕಾಗುವುದು.</verse>
				<verse number="6">ಈ ಕಾರಣದಿಂದಲೇ ಈಗ ಸತ್ತಿರುವವರಿಗೂ ಸಹ ಬದುಕಿದ್ದಾಗ ಸುವಾರ್ತೆ ಸಾರಲಾಯಿತು. ಆದ್ದರಿಂದ ಎಲ್ಲಾ ಮನುಷ್ಯರಿಗೆ ನೇಮಿಸಿದ ನ್ಯಾಯತೀರ್ಪಿನಂತೆ ಅವರು ದೇಹದಲ್ಲಿ ಮರಣ ಹೊಂದಿದ್ದರೂ, ತಮ್ಮ ಆತ್ಮದಲ್ಲಿ ದೇವರಿಗಾಗಿ ಜೀವಿಸುವರು.</verse>
				<verse number="7">ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರಿ.</verse>
				<verse number="8">ಎಲ್ಲಕ್ಕೂ ಮಿಗಿಲಾಗಿ ನಿಮ್ಮನಿಮ್ಮೊಳಗೆ ಯಥಾರ್ಥವಾದ ಪ್ರೀತಿ ಇರಲಿ. ಏಕೆಂದರೆ ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.</verse>
				<verse number="9">ಗೊಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.</verse>
				<verse number="10">ನೀವು ದೇವರಿಂದ ವಿವಿಧ ಕೃಪಾವರಗಳನ್ನು ಹೊಂದಿರಲಾಗಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿರುವ ವರಗಳನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.</verse>
				<verse number="11">ಒಬ್ಬನು ಬೋಧಿಸುವವನಾದರೆ ದೇವರ ವಾಕ್ಯವನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲದರಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಮಹಿಮೆಯೂ ಸ್ತೋತ್ರವೂ ಅಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.</verse>
				<verse number="12">ಪ್ರಿಯರೇ, ನಿಮ್ಮನ್ನು ಶೋಧಿಸಲು ಬರುವ ಅಗ್ನಿಪರೀಕ್ಷೆಗೆ ನೀವು ಆಶ್ಚರ್ಯಪಡಬೇಡಿರಿ. ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿತೆಂದು ಯೋಚಿಸಬೇಡಿರಿ.</verse>
				<verse number="13">ನೀವು ಕ್ರಿಸ್ತ ಯೇಸುವಿನ ಬಾಧೆಗಳಲ್ಲಿ ಪಾಲುಗಾರರಾಗಿರುವುದರಿಂದ ಸಂತೋಷವುಳ್ಳವರಾಗಿರಿ. ಆಗ ಕ್ರಿಸ್ತ ಯೇಸುವಿನ ಮಹಿಮೆಯ ಪ್ರತ್ಯಕ್ಷತೆಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.</verse>
				<verse number="14">ನೀವು ಕ್ರಿಸ್ತ ಯೇಸುವಿನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ, ಧನ್ಯರು. ಏಕೆಂದರೆ, ಮಹಿಮೆಯ ಆತ್ಮರೂ, ದೇವರೂ ನಿಮ್ಮಲ್ಲಿ ವಾಸಿಸುತ್ತಾರೆ.</verse>
				<verse number="15">ನಿಮ್ಮಲ್ಲಿ ಯಾವನಾದರೂ ಕೊಲೆಗಾರನು, ಕಳ್ಳನು, ದುಷ್ಟನು ಪರರ ಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನು ಅನುಭವಿಸಬಾರದು.</verse>
				<verse number="16">ನೀವು ಕ್ರಿಸ್ತ ಯೇಸುವನ್ನು ಹಿಂಬಾಲಿಸುವವರಾಗಿ ಬಾಧೆಪಟ್ಟರೆ ನಾಚಿಕೆಪಡಬೇಡಿರಿ. ಆ ಹೆಸರನ್ನು ಹೊಂದಿದ್ದಕ್ಕಾಗಿ ದೇವರನ್ನು ಘನಪಡಿಸಲಿ.</verse>
				<verse number="17">ಏಕೆಂದರೆ ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯತೀರ್ಪಿನ ಸಮಯವು ಬಂದಿದೆ. ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರಬಹುದು?</verse>
				<verse number="18">ಮತ್ತು, “ನೀತಿವಂತನೇ ರಕ್ಷಣೆ ಹೊಂದುವುದು ಕಷ್ಟವಾದರೆ, ಭಕ್ತಿಹೀನನೂ ಪಾಪಿಷ್ಠನೂ ಆಗಿರುವವನ ಗತಿ ಏನು?”</verse>
				<verse number="19">ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡುವವರು ತಮ್ಮ ಆತ್ಮಗಳನ್ನು ನಂಬಿಗಸ್ತ ಆಗಿರುವ ಸೃಷ್ಟಿಕರ್ತ ದೇವರಿಗೆ ಒಪ್ಪಿಸಿ, ಒಳ್ಳೆಯದನ್ನು ಮಾಡಲಿ.</verse>
			</chapter>
			<chapter number="5">
				<verse number="1">ಜೊತೆ ಹಿರಿಯನೂ ಕ್ರಿಸ್ತ ಯೇಸುವಿನ ಶ್ರಮೆಗಳ ಸಾಕ್ಷಿಯೂ ಪ್ರತ್ಯಕ್ಷವಾಗಲಿರುವ ಮಹಿಮೆಯಲ್ಲಿ ಪಾಲುಗಾರನೂ ಆಗಿರುವ ನಾನು ನಿಮ್ಮಲ್ಲಿರುವ ಹಿರಿಯರನ್ನು ಬೇಡಿಕೊಳ್ಳುವುದು.</verse>
				<verse number="2">ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲಾತ್ಕಾರದಿಂದಲ್ಲ, ಆದರೆ ದೇವರ ಪ್ರಕಾರ ಇಷ್ಟಪೂರ್ವಕವಾಗಿಯೂ ನೀಚ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿಚಾರಣೆ ಮಾಡಿರಿ.</verse>
				<verse number="3">ದೇವರ ಸ್ವಾಸ್ತ್ಯದ ಮೇಲೆ ದೊರೆತನ ಮಾಡುವವರಂತೆ ನಡೆಯದೆ ಮಂದೆಗೆ ಆದರ್ಶವಾಗಿಯೇ ನಡೆದುಕೊಳ್ಳಿರಿ.</verse>
				<verse number="4">ಪ್ರಧಾನ ಕುರುಬ ಆಗಿರುವವರು ಪ್ರತ್ಯಕ್ಷರಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.</verse>
				<verse number="5">ಅದೇ ರೀತಿಯಾಗಿ ಯೌವನಸ್ಥರೇ, ಹಿರಿಯರಿಗೆ ಅಧೀನರಾಗಿರಿ. ನೀವೆಲ್ಲರೂ ದೀನತೆಯೆಂಬ ವಸ್ತ್ರವನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಅಧೀನರಾಗಿರಿ. ಏಕೆಂದರೆ, “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ, ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ!”</verse>
				<verse number="6">ಹೀಗಿರುವುದರಿಂದ ದೇವರ ಪರಾಕ್ರಮವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ, ಆಗ ದೇವರು ಸಕಾಲದಲ್ಲಿ ನಿಮ್ಮನ್ನು ಮೇಲಕ್ಕೆತ್ತುವರು.</verse>
				<verse number="7">ನಿಮ್ಮ ಚಿಂತೆಯನ್ನೆಲ್ಲಾ ದೇವರ ಮೇಲೆ ಹಾಕಿರಿ. ಅವರು ನಿಮಗೋಸ್ಕರ ಚಿಂತಿಸುತ್ತಾರೆ.</verse>
				<verse number="8">ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.</verse>
				<verse number="9">ನೀವು ನಂಬಿಕೆಯಲ್ಲಿ ದೃಢವಾಗಿದ್ದು ಸೈತಾನನನ್ನು ಎದುರಿಸಿರಿ. ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಸಹೋದರಿಯರಿಗೂ ಅಂಥಾ ಬಾಧೆಗಳೇ ಸಂಭವಿಸುತ್ತವೆ ಎಂದು ನಿಮಗೆ ತಿಳಿದದೆಯಲ್ಲಾ.</verse>
				<verse number="10">ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.</verse>
				<verse number="11">ಅವರಿಗೆ ಸರ್ವಾಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.</verse>
				<verse number="12">ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಿಮಗೆ ನಂಬಿಗಸ್ತ ಆಗಿರುವ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಸಹಾಯದಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.</verse>
				<verse number="13">ನಿಮ್ಮೊಂದಿಗೆ ಆರಿಸಿಕೊಂಡಂಥ ಬಾಬಿಲೋನಿನಲ್ಲಿರುವ ಸಭೆಯು ನಿಮಗೆ ವಂದನೆ ಹೇಳುತ್ತದೆ. ನನ್ನ ಮಗನಾದ ಮಾರ್ಕನು ಸಹ ವಂದನೆ ಹೇಳುತ್ತಾನೆ.</verse>
				<verse number="14">ಪ್ರೀತಿಯಿಂದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮೆಲ್ಲರಿಗೆ ಶಾಂತಿಯಿರಲಿ!</verse>
			</chapter>
		</book>
		<book number="61">
			<chapter number="1">
				<verse number="1">ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು, ನಮ್ಮ ದೇವರ ಮತ್ತು ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ನೀತಿಯ ಮೂಲಕ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದು:</verse>
				<verse number="2">ದೇವರ ವಿಷಯವಾಗಿಯೂ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ವಿಷಯವಾಗಿಯೂ ಇರುವ ತಿಳುವಳಿಕೆಯ ಮೂಲಕ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.</verse>
				<verse number="3">ದೇವರು ತಮ್ಮ ಸ್ವಂತ ಮಹಿಮೆಗಾಗಿಯೂ ಸದ್ಗುಣಕ್ಕಾಗಿಯೂ ನಮ್ಮನ್ನು ಕರೆದಿದ್ದಾರೆ. ಏಕೆಂದರೆ, ದೇವರ ತಿಳುವಳಿಕೆಯ ಮೂಲಕವಾಗಿ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ದೇವರ ಶಕ್ತಿಯು ನಮಗೆ ಕೊಡಲಾಗಿದೆ.</verse>
				<verse number="4">ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಅತ್ಯಂತ ಮಹತ್ವವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ದೇವರು ನಮಗೆ ದಯಪಾಲಿಸಿದ್ದಾರೆ.</verse>
				<verse number="5">ಈ ಕಾರಣದಿಂದಲೇ ನೀವು ಪೂರ್ಣಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ</verse>
				<verse number="6">ಜ್ಞಾನಕ್ಕೆ ಸ್ವಯಂ ನಿಯಂತ್ರಣವನ್ನೂ ಸ್ವಯಂ ನಿಯಂತ್ರಣಕ್ಕೆ ತಾಳ್ಮೆಯನ್ನೂ</verse>
				<verse number="7">ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸೋದರ ಸ್ನೇಹವನ್ನೂ ಸೋದರ ಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ.</verse>
				<verse number="8">ಈ ಗುಣಗಳು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ, ನಮ್ಮ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅರಿತುಕೊಳ್ಳುವುದರಲ್ಲಿ ನೀವು ನಿಷ್ಪ್ರಯೋಜಕರೂ ನಿಷ್ಫಲರೂ ಆಗದಂತೆ ಮಾಡುತ್ತವೆ.</verse>
				<verse number="9">ಆದರೆ ಈ ಗುಣಗಳಿಲ್ಲದವನು ಕುರುಡನಾಗಿದ್ದಾನೆ. ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಿನ ಪಾಪಗಳಿಂದ ಶುದ್ಧನಾದದ್ದನ್ನು ಮರೆತು ಬಿಟ್ಟಿದ್ದಾನೆ.</verse>
				<verse number="10">ಆದ್ದರಿಂದ ಪ್ರಿಯರೇ, ನಿಮ್ಮ ಕರೆಯುವಿಕೆಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳಲು ಸರ್ವ ಪ್ರಯತ್ನವನ್ನು ಮಾಡಿರಿ. ಏಕೆಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ಪಾಪದಲ್ಲಿ ಬಿದ್ದುಹೋಗುವುದಿಲ್ಲ.</verse>
				<verse number="11">ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವು ತಮ್ಮ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಭಾಗ್ಯವನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.</verse>
				<verse number="12">ಆದ್ದರಿಂದ ನೀವು ಈ ಸಂಗತಿಗಳನ್ನು ತಿಳಿದವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮ್ಮ ನೆನಪಿಗೆ ತರಲು ನಾನು ಬಯಸುತ್ತೇನೆ.</verse>
				<verse number="13">ನಾನು ನನ್ನ ದೇಹವೆಂಬ ಗುಡಾರದಲ್ಲಿ ಬಾಳುವ ತನಕ ನಿಮ್ಮ ನೆನಪಿಗೆ ತರುವುದು ಯುಕ್ತವೆಂದೆಣಿಸಿದ್ದೇನೆ.</verse>
				<verse number="14">ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ನನಗೆ ಸ್ಪಷ್ಟ ಪಡಿಸಿದ ಪ್ರಕಾರ, ಈ ನನ್ನ ದೇಹವೆಂಬ ಗುಡಾರವನ್ನು ತೆಗೆದುಹಾಕುವ ಕಾಲ ಬೇಗನೆ ಬರುತ್ತದೆಂದು ನಾನು ಬಲ್ಲೆನು.</verse>
				<verse number="15">ಆದರೂ ನೀವು ನನ್ನ ಮರಣಾನಂತರ ಇವುಗಳನ್ನು ಯಾವಾಗಲೂ ನೆನಪಿಟ್ಟುಕೊಳ್ಳುವಂತೆ ನನ್ನಿಂದಾದಷ್ಟು ಪ್ರಯಾಸಪಡುವೆನು.</verse>
				<verse number="16">ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಶಕ್ತಿಯ ಬಗ್ಗೆಯೂ ಅವರ ಪುನರಾಗಮನದ ಬಗ್ಗೆಯೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಕುತಂತ್ರವಾಗಿ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿಸಲಿಲ್ಲ. ಆದರೆ ನಾವೇ ಕ್ರಿಸ್ತ ಯೇಸುವಿನ ಮಹತ್ತನ್ನು ಕಣ್ಣಾರೆ ಕಂಡವರಾಗಿ ತಿಳಿಯಪಡಿಸಿದೆವು.</verse>
				<verse number="17">ಏಕೆಂದರೆ, “ಈತನು ಪ್ರಿಯನಾಗಿರುವ ನನ್ನ ಮಗನು, ಈತನನ್ನು ನಾನು ಮೆಚ್ಚಿದ್ದೇನೆ,” ಎಂಬ ಧ್ವನಿಯು ಮಹೋನ್ನತ ಮಹಿಮೆಯಿಂದ ಅವರಿಗೆ ಉಂಟಾದದ್ದರಲ್ಲಿ ಅವರು ತಂದೆ ದೇವರಿಂದ ಗೌರವವನ್ನೂ ಮಹಿಮೆಯನ್ನೂ ಹೊಂದಿದರಲ್ಲವೇ.</verse>
				<verse number="18">ನಾವು ಪರಿಶುದ್ಧ ಪರ್ವತದ ಮೇಲೆ ಕ್ರಿಸ್ತ ಯೇಸುವಿನ ಸಂಗಡ ಇದ್ದಾಗ ಪರಲೋಕದಿಂದ ಬಂದ ಆ ಧ್ವನಿಯನ್ನು ನಾವೇ ಕೇಳಿದೆವು.</verse>
				<verse number="19">ಮಾತ್ರವಲ್ಲದೆ ನಮಗೆ ಬಹು ನಿಶ್ಚಯವಾದ ಪ್ರವಾದನೆಯ ವಾಕ್ಯಗಳಿವೆ. ಉದಯ ನಕ್ಷತ್ರವಾಗಿರುವ ಕ್ರಿಸ್ತ ಯೇಸು ನಿಮ್ಮ ಹೃದಯಗಳಲ್ಲಿ ಉದಯಿಸುವಾಗ ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪದಂತೆ ಎಣಿಸಿ, ನೀವು ಆ ಪ್ರವಾದನಾ ವಾಕ್ಯಗಳಿಗೆ ಲಕ್ಷ್ಯಕೊಡುವುದು ಒಳ್ಳೆಯದು.</verse>
				<verse number="20">ಪವಿತ್ರ ವೇದದ ಯಾವ ಪ್ರವಾದನೆಯೂ ಕೇವಲ ಪ್ರವಾದಿಗಳಿಂದ ಸ್ವಂತವಾಗಿ ವಿವರಿಸತಕ್ಕದ್ದಲ್ಲ ಎಂಬುದನ್ನು ಮೊದಲು ತಿಳಿದುಕೊಳ್ಳಿರಿ.</verse>
				<verse number="21">ಯಾವ ಪ್ರವಾದನೆಯೂ ಎಂದೂ ಮನುಷ್ಯನ ಚಿತ್ತದಿಂದ ಬರಲಿಲ್ಲ, ಆದರೆ ಪ್ರವಾದಿಗಳು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಪಡೆದುಕೊಂಡಿದ್ದನ್ನೇ ಮಾತನಾಡಿದರು.</verse>
			</chapter>
			<chapter number="2">
				<verse number="1">ಆದರೆ ಆ ಕಾಲದಲ್ಲಿ ಸುಳ್ಳು ಪ್ರವಾದಿಗಳು ಸಹ ಜನರಲ್ಲಿ ಕಾಣಿಸಿಕೊಂಡರು. ಅದೇ ಪ್ರಕಾರ ನಿಮ್ಮಲ್ಲಿಯೂ ಈಗ ಸುಳ್ಳು ಬೋಧಕರು ಕಾಣಿಸಿಕೊಳ್ಳುವರು. ಅಂಥವರು ಹಾನಿಕರವಾದ ಸುಳ್ಳು ಬೋಧನೆಗಳನ್ನು ರಹಸ್ಯವಾಗಿ ಸಭೆಯೊಳಗೆ ತರುವರು. ತಮ್ಮನ್ನು ಕೊಂಡುಕೊಂಡ ಸಾರ್ವಭೌಮ ಕರ್ತ ಆಗಿರುವವರನ್ನೇ ಅಲ್ಲಗಳೆಯುವರು. ಹೀಗೆ ಅವರು ತಮ್ಮ ಮೇಲೆ ವಿನಾಶವನ್ನು ತಾವೇ ಬರಮಾಡಿಕೊಳ್ಳುವರು.</verse>
				<verse number="2">ಆ ಸುಳ್ಳು ಬೋಧಕರ ಅಸಹ್ಯ ಕೃತ್ಯಗಳನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.</verse>
				<verse number="3">ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.</verse>
				<verse number="4">ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕೆ ಬಂಧಿಸಿ, ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದರು.</verse>
				<verse number="5">ದೇವರು ಪುರಾತನ ಜಗತ್ತನ್ನು ಸುಮ್ಮನೆ ಬಿಡದೆ ಭಕ್ತಿಹೀನರ ಲೋಕದ ಮೇಲೆ ಜಲಪ್ರಳಯವನ್ನು ಬರಮಾಡಿದರು. ಆದರೆ ನೀತಿಯನ್ನು ಸಾರುತ್ತಿದ್ದ ನೋಹನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ರಕ್ಷಿಸಿದರು.</verse>
				<verse number="6">ದೇವರು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದರು.</verse>
				<verse number="7">ದೇವರು ಆ ದುಷ್ಟರ ನಡತೆಗೆ ವೇದನೆಗೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದರು.</verse>
				<verse number="8">ಏಕೆಂದರೆ ಆ ನೀತಿವಂತನು ಅವರ ಮಧ್ಯದಲ್ಲಿ ಇದ್ದುಕೊಂಡು ಅವರ ಅನ್ಯಾಯಕೃತ್ಯಗಳನ್ನು ನೋಡುತ್ತಾ, ಕೇಳುತ್ತಾ, ಅವುಗಳ ನಿಮಿತ್ತ ದಿನೇ ದಿನೇ ತನ್ನ ನೀತಿಯುಳ್ಳ ಆತ್ಮದಲ್ಲಿ ವೇದನೆಗೊಂಡನು.</verse>
				<verse number="9">ಕರ್ತದೇವರು ಭಕ್ತರನ್ನು ಸಂಕಟದೊಳಗಿಂದ ತಪ್ಪಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವರಾಗಿದ್ದಾರೆ.</verse>
				<verse number="10">ಆದರೆ ಮುಖ್ಯವಾಗಿ ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವರು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ. ದುರಹಂಕಾರದಿಂದ ಸ್ವರ್ಗೀಯ ಜೀವಿಗಳನ್ನು ದೂಷಿಸುತ್ತಾರೆ.</verse>
				<verse number="11">ಆದರೂ ದೇವದೂತರು ಬಲದಲ್ಲಿಯೂ ಮಹತ್ತಿನಲ್ಲಿಯೂ ಶ್ರೇಷ್ಠರಾಗಿದ್ದರೂ ಸ್ವರ್ಗೀಯ ಜೀವಿಗಳ ವಿರೋಧವಾಗಿ ಕರ್ತದೇವರ ಮುಂದೆ ಇವರು ನ್ಯಾಯತೀರ್ಪನ್ನು ತರುವುದಿಲ್ಲ.</verse>
				<verse number="12">ಆದರೆ ಬೇಟೆಗಾಗಿ ಹುಟ್ಟಿರುವ ವಿವೇಕಹೀನ ಮೃಗಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಣೆ ಮಾಡುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ಮೃಗಗಳಂತೆ ಸಂಪೂರ್ಣ ನಾಶವಾಗುವರು.</verse>
				<verse number="13">ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯನ್ನು ಹಗಲಲ್ಲಿ ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮ ಸಂಗಡ ಸೇರಿ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಕಳಂಕಕ್ಕೂ, ನಿಂದೆಗೂ ಕಾರಣರಾಗಿದ್ದಾರೆ.</verse>
				<verse number="14">ಇವರು ಕಾಮುಕದಿಂದ ತುಂಬಿದ ಕಣ್ಣು ಮತ್ತು ಪಾಪವನ್ನು ಬಿಡಲೊಲ್ಲದ ಚಪಲಚಿತ್ತರೂ ಮರುಳುಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.</verse>
				<verse number="15">ಇವರು ನೇರವಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.</verse>
				<verse number="16">ಆದರೆ ಅವನ ದುಷ್ಟತನಕ್ಕೆ ಖಂಡನೆಯಾಯಿತು. ಮೂಕ ಕತ್ತೆಯು ಮನುಷ್ಯ ಸ್ವರದಿಂದ ಮಾತನಾಡಿ ಆ ಪ್ರವಾದಿಯ ಹುಚ್ಚುತನಕ್ಕೆ ಅಡ್ಡಿಮಾಡಿತು.</verse>
				<verse number="17">ಈ ಸುಳ್ಳು ಬೋಧಕರು ನೀರಿಲ್ಲದ ಬಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ಕಾರ್ಗತ್ತಲು ಇಟ್ಟಿರುವುದು.</verse>
				<verse number="18">ತಪ್ಪಾದ ಮಾರ್ಗದಲ್ಲಿ ಬಾಳುವವರಿಂದ ತಪ್ಪಿಸಿಕೊಂಡವರನ್ನು ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.</verse>
				<verse number="19">ಇಂಥವರು ಸ್ವಾತಂತ್ರ್ಯಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ. ಆದರೆ ತಾವೇ ಕೆಟ್ಟತನದ ದಾಸತ್ವದೊಳಗಿದ್ದಾರೆ. ಒಬ್ಬನು ಯಾವುದಕ್ಕೆ ಸೋತು ಹೋಗಿರುವನೋ, ಅವನು ಅದರ ದಾಸತ್ವದೊಳಗಿರುವನಷ್ಟೆ.</verse>
				<verse number="20">ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನಹೊಂದಿ ಲೋಕದ ಮಾಲಿನ್ಯಗಳನ್ನು ತಪ್ಪಿಸಿಕೊಂಡವರು ತಿರುಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿರುವುದು.</verse>
				<verse number="21">ಅವರು ನೀತಿಮಾರ್ಗವನ್ನು ತಿಳಿದುಕೊಂಡ ಮೇಲೆ ತಮಗೆ ಕೊಡಲಾದ ಪವಿತ್ರ ಆಜ್ಞೆಯಿಂದ ತೊಲಗಿ ಹೋಗುವುದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.</verse>
				<verse number="22">“ನಾಯಿ ತಾನು ಕಕ್ಕಿದ್ದನ್ನು ನೆಕ್ಕಲು ತಿರುಗಿಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡಲು ತಿರುಗಿಕೊಂಡಿತು!” ಎಂಬ ನಿಜವಾದ ಗಾದೆ ಅವರಿಗೆ ಸರಿಯಾಗಿ ಅನ್ವಯಿಸುತ್ತದೆ.</verse>
			</chapter>
			<chapter number="3">
				<verse number="1">ಪ್ರಿಯರೇ, ನಿಮಗೀಗ ಬರೆಯುವುದು ಎರಡನೆಯ ಪತ್ರ. ಈ ಎರಡು ಪತ್ರಗಳಲ್ಲಿಯೂ ನಿಮ್ಮ ನೆನಪಿಗೆ ತಂದು ನಿಮ್ಮ ನಿರ್ಮಲವಾದ ಮನಸ್ಸನ್ನು ಉತ್ತೇಜಿಸಿದ್ದೇನೆ.</verse>
				<verse number="2">ಪರಿಶುದ್ಧ ಪ್ರವಾದಿಗಳು ಪೂರ್ವದಲ್ಲಿ ಹೇಳಿದ ಮಾತುಗಳನ್ನೂ ನಮಗೆ ಕರ್ತ ಹಾಗೂ ರಕ್ಷಕ ಆಗಿರುವವರು ನಿಮ್ಮ ಅಪೊಸ್ತಲರ ಮೂಲಕ ಕೊಟ್ಟ ಅಪ್ಪಣೆಯನ್ನೂ ನೀವು ನೆನಪಿನಲ್ಲಿ ಇಟ್ಟುಕೊಳ್ಳಬೇಕು ಎಂದು ಬಯಸುತ್ತೇನೆ.</verse>
				<verse number="3">ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು,</verse>
				<verse number="4">“ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ?” ಎಂದು ಕುಚೋದ್ಯದಿಂದ ಕೇಳುವರೆಂದು ನೀವು ಮೊದಲು ತಿಳಿದುಕೊಳ್ಳಬೇಕು.</verse>
				<verse number="5">ಆದರೆ ಪೂರ್ವಕಾಲದಲ್ಲಿ ದೇವರ ವಾಕ್ಯದಿಂದ ಆಕಾಶವು ಅಸ್ತಿತ್ವಕ್ಕೆ ಬಂದಿತು ಎಂತಲೂ ಜಲದಿಂದ ಜಲದ ಮೂಲಕ ಭೂಮಿಯು ಉಂಟಾಯಿತೆಂಬುದನ್ನು ಅವರು ಬೇಕೆಂತಲೇ ಮರೆತುಬಿಡುತ್ತಾರೆ.</verse>
				<verse number="6">ಈ ಜಲದಿಂದ ಆ ಸಮಯದಲ್ಲಿ ಜಗತ್ತು ಪ್ರಳಯದಲ್ಲಿ ನಾಶವಾಯಿತು.</verse>
				<verse number="7">ಆದರೆ ಈಗಿನ ಆಕಾಶವೂ ಭೂಮಿಯೂ ಅದೇ ವಾಕ್ಯದಿಂದ ಬೆಂಕಿಗಾಗಿ ಕಾದಿರಿಸಲಾಗಿವೆ. ಅವು ನ್ಯಾಯತೀರ್ಪಿಗಾಗಿ ಮತ್ತು ಭಕ್ತಿಹೀನರ ನಾಶನಕ್ಕಾಗಿ ಇಡಲಾಗಿವೆ.</verse>
				<verse number="8">ಆದರೆ ಪ್ರಿಯರೇ, ಕರ್ತದೇವರ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.</verse>
				<verse number="9">ಕರ್ತದೇವರು ತಮ್ಮ ವಾಗ್ದಾನದ ವಿಷಯವಾಗಿ ತಡಮಾಡುತ್ತಾರೆಂಬದಾಗಿ ಕೆಲವರು ಎಣಿಸುವ ಪ್ರಕಾರ ಅವರು ತಡಮಾಡುವವರಲ್ಲ. ಆದರೆ ಯಾವನಾದರೂ ನಾಶವಾಗುವುದರಲ್ಲಿ ಅವರು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಡಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಕಡೆಗೆ ದೀರ್ಘಶಾಂತರಾಗಿದ್ದಾರೆ.</verse>
				<verse number="10">ಆದರೂ ಕರ್ತ ಯೇಸುವಿನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.</verse>
				<verse number="11">ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವುದರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು.</verse>
				<verse number="12">ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿಹತ್ತಿ ಲಯವಾಗಿ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?</verse>
				<verse number="13">ಆದರೂ ನಾವು ದೇವರ ವಾಗ್ದಾನದ ಪ್ರಕಾರ ನೂತನ ಆಕಾಶಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ. ಅವುಗಳಲ್ಲಿ ನೀತಿಯು ವಾಸವಾಗಿರುವುದು.</verse>
				<verse number="14">ಆದಕಾರಣ ಪ್ರಿಯ ಸ್ನೇಹಿತರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವುದರಿಂದ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಅವರಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವರಾಗಿರಿ.</verse>
				<verse number="15">ನಮ್ಮ ಕರ್ತದೇವರ ದೀರ್ಘಶಾಂತಿಯು ನಮ್ಮ ರಕ್ಷಣೆಯ ಕಾರಣಕ್ಕಾಗಿ ಇದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.</verse>
				<verse number="16">ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ವಿಷಯಗಳು ತಿಳಿಯುವುದಕ್ಕೆ ಕಷ್ಟವಾಗಿವೆ. ಪವಿತ್ರ ವೇದದ ಮಿಕ್ಕಾದ ಭಾಗಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ವಿದ್ಯಾಹೀನರೂ ಚಪಲಚಿತ್ತರೂ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತಮಗೆ ನಾಶವನ್ನುಂಟುಮಾಡಿಕೊಳ್ಳುತ್ತಾರೆ.</verse>
				<verse number="17">ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂದಾಗಿ ತಿಳಿದುಕೊಂಡಿರುವುದರಿಂದ ನಿಯಮರಹಿತರ ಸೆಳೆಯುವಿಕೆಗೆ ಮರುಳಾಗಿ ನಿಮ್ಮ ಸ್ಥಿರತೆಯಿಂದ ಬಿದ್ದುಹೋಗದಂತೆ ಎಚ್ಚರಿಕೆಯಿಂದಿರಿ.</verse>
				<verse number="18">ನೀವು ಕೃಪೆಯಲ್ಲಿ ಬೆಳೆಯಿರಿ ಮತ್ತು ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಅವರಿಗೆ ಈಗಲೂ ಸರ್ವಕಾಲವೂ ಮಹಿಮೆ ಇರಲಿ! ಆಮೆನ್.</verse>
			</chapter>
		</book>
		<book number="62">
			<chapter number="1">
				<verse number="1">ಆದಿಯಿಂದ ಇರುವಂಥದ್ದೂ ಕೇಳಿದ್ದನ್ನೂ ಕಣ್ಣಾರೆ ಕಂಡು ನೋಡಿದ್ದನ್ನೂ ನಾವು ಕೈಯಿಂದ ಮುಟ್ಟಿದ್ದ ಆ ಜೀವವಾಕ್ಯವನ್ನೇ ಸಾರುತ್ತಿದ್ದೇವೆ.</verse>
				<verse number="2">ಈ ಜೀವವು ಪ್ರತ್ಯಕ್ಷವಾಯಿತು. ತಂದೆಯ ಬಳಿಯಲ್ಲಿದ್ದು ನಮಗೆ ಪ್ರತ್ಯಕ್ಷವಾದಂಥ ಆ ನಿತ್ಯಜೀವವನ್ನು ನಾವು ಕಂಡು, ಅದನ್ನು ಕುರಿತು ಸಾಕ್ಷಿ ಹೇಳಿ ಅದನ್ನು ನಿಮಗೆ ತಿಳಿಯಪಡಿಸುತ್ತೇವೆ.</verse>
				<verse number="3">ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರಬೇಕೆಂದು, ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡವೂ ಅವರ ಮಗನಾದ ಕ್ರಿಸ್ತ ಯೇಸುವಿನ ಸಂಗಡವೂ ಇರುವಂಥದ್ದು.</verse>
				<verse number="4">ನಮ್ಮ ಸಂತೋಷವು ಪರಿಪೂರ್ಣವಾಗಬೇಕೆಂದು ನಾವು ಇವುಗಳನ್ನು ಬರೆಯುತ್ತಿದ್ದೇವೆ.</verse>
				<verse number="5">ನಾವು ಕ್ರಿಸ್ತ ಯೇಸುವಿನಿಂದ ಕೇಳಿ ನಿಮಗೆ ತಿಳಿಸುವ ವಾರ್ತೆ ಯಾವುದೆಂದರೆ: ದೇವರು ಬೆಳಕಾಗಿದ್ದಾರೆ, ಅವರಲ್ಲಿ ಎಷ್ಟು ಮಾತ್ರವೂ ಕತ್ತಲೆಯಿಲ್ಲ, ಎಂಬುದೇ.</verse>
				<verse number="6">ನಾವು ದೇವರ ಸಂಗಡ ಅನ್ಯೋನ್ಯತೆಯುಳ್ಳವರಾಗಿದ್ದೇವೆಂದು ಹೇಳಿ ಕತ್ತಲೆಯಲ್ಲಿ ನಡೆದರೂ ಸುಳ್ಳಾಡುವವರಾಗಿದ್ದರೆ, ನಾವು ಸತ್ಯವನ್ನು ಅನುಸರಿಸುವವರಲ್ಲ.</verse>
				<verse number="7">ದೇವರು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ಬಾಳಿದರೆ, ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ, ಆಗ ದೇವರ ಮಗನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.</verse>
				<verse number="8">ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ.</verse>
				<verse number="9">ನಾವು ನಮ್ಮ ಪಾಪಗಳನ್ನು ದೇವರಿಗೆ ಅರಿಕೆಮಾಡಿದರೆ ಅವರು ನಂಬಿಗಸ್ತರೂ ನೀತಿವಂತರೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ, ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವರು.</verse>
				<verse number="10">ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ದೇವರನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ. ಅವರ ವಾಕ್ಯವು ನಮ್ಮಲ್ಲಿ ಬಾಳುವುದಿಲ್ಲ.</verse>
			</chapter>
			<chapter number="2">
				<verse number="1">ನನ್ನ ಪ್ರಿಯ ಮಕ್ಕಳೇ, ನೀವು ಪಾಪಮಾಡದಂತೆ ಇವುಗಳನ್ನು ನಾನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತರಾದ ಕ್ರಿಸ್ತ ಯೇಸುವು ನಮ್ಮ ಪರವಾಗಿ ವಾದಿಸುವ ವಕೀಲರಾಗಿದ್ದಾರೆ.</verse>
				<verse number="2">ಕ್ರಿಸ್ತ ಯೇಸು ನಮ್ಮ ಪಾಪಗಳನ್ನು ಪರಿಹರಿಸುವ ಬಲಿಯಾಗಿದ್ದಾರೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನೂ ಪರಿಹರಿಸುತ್ತಾರೆ.</verse>
				<verse number="3">ನಾವು ದೇವರ ಆಜ್ಞೆಗಳನ್ನು ಕೈಕೊಂಡು ನಡೆಯುವುದರಿಂದಲೇ ದೇವರನ್ನು ಬಲ್ಲವರಾಗಿದ್ದೇವೆಂದು ತಿಳಿದುಕೊಳ್ಳುತ್ತೇವೆ.</verse>
				<verse number="4">ಒಬ್ಬನು, “ನಾನು ಅವರನ್ನು ಬಲ್ಲೆನು,” ಎಂದು ಹೇಳಿ ಅವರ ಆಜ್ಞೆಗಳನ್ನು ಕೈಗೊಳ್ಳದಿದ್ದರೆ ಅವನು ಸುಳ್ಳುಗಾರನಾಗಿದ್ದಾನೆ. ಸತ್ಯವು ಅವನಲ್ಲಿ ಇಲ್ಲ.</verse>
				<verse number="5">ಯಾವನಾದರೂ ದೇವರ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ದೇವರಲ್ಲಿದ್ದೇವೆಂಬುದನ್ನು ತಿಳಿದುಕೊಳ್ಳುತ್ತೇವೆ.</verse>
				<verse number="6">ದೇವರಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಯೇಸು ಜೀವಿಸಿದಂತೆಯೇ ತಾನೂ ಜೀವಿಸಬೇಕು.</verse>
				<verse number="7">ಪ್ರಿಯರೇ, ನಾನು ನಿಮಗೆ ಬರೆಯುವುದು ಹೊಸ ಅಪ್ಪಣೆಯಲ್ಲ, ಮೊದಲಿನಿಂದಲೂ ನಿಮಗಿದ್ದ ಹಳೆಯ ಅಪ್ಪಣೆಯಾಗಿದೆ. ಈ ಹಳೆಯ ಅಪ್ಪಣೆಯು ಮೊದಲಿನಿಂದಲೂ ನೀವು ಕೇಳಿದ ವಾಕ್ಯವೇ.</verse>
				<verse number="8">ತಿರುಗಿ ನಾನು ನಿಮಗೆ ಬರೆಯುವುದು ಹೊಸ ಅಪ್ಪಣೆಯೇ. ಇದು ಕ್ರಿಸ್ತ ಯೇಸುವಿನಲ್ಲಿಯೂ ನಿಮ್ಮಲ್ಲಿಯೂ ಸತ್ಯವಾಗಿದೆ. ಏಕೆಂದರೆ ಕತ್ತಲೆಯು ಕಳೆದುಹೋಗುತ್ತದೆ. ಸತ್ಯವಾದ ಬೆಳಕು ಈಗ ಪ್ರಕಾಶಿಸುತ್ತಲಿದೆ.</verse>
				<verse number="9">ಬೆಳಕಿನಲ್ಲಿದ್ದೇನೆಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಈವರೆಗೂ ಕತ್ತಲೆಯಲ್ಲಿದ್ದಾನೆ.</verse>
				<verse number="10">ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಅವನಲ್ಲಿ ಆತಂಕವುಳ್ಳದ್ದು ಯಾವುದೂ ಇಲ್ಲ.</verse>
				<verse number="11">ಆದರೆ ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲೆಯಲ್ಲಿದ್ದಾನೆ ಮತ್ತು ಕತ್ತಲೆಯಲ್ಲಿ ಜೀವಿಸುತ್ತಾನೆ. ಕತ್ತಲೆಯು ಅವನ ಕಣ್ಣುಗಳನ್ನು ಕುರುಡು ಮಾಡಿದ್ದರಿಂದ ತಾನು ಎಲ್ಲಿಗೆ ಹೋಗುತ್ತಾನೋ ಎಂದು ಅವನಿಗೆ ತಿಳಿಯದು.</verse>
				<verse number="12">ಪ್ರಿಯ ಮಕ್ಕಳೇ, ಕ್ರಿಸ್ತ ಯೇಸುವಿನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲಾಗಿರುವುದರಿಂದ ನಾನು ನಿಮಗೆ ಬರೆಯುತ್ತೇನೆ.</verse>
				<verse number="13">ತಂದೆಗಳೇ, ಆದಿಯಿಂದ ಇರುವ ದೇವರನ್ನು ನೀವು ಬಲ್ಲವರಾಗಿರುವುದರಿಂದ ನಾನು ನಿಮಗೆ ಬರೆಯುತ್ತೇನೆ. ಯೌವನಸ್ಥರೇ, ನೀವು ಕೆಡುಕನನ್ನು ಜಯಿಸಿರುವುದರಿಂದ ನಿಮಗೆ ಬರೆಯುತ್ತೇನೆ.</verse>
				<verse number="14">ಮಕ್ಕಳೇ, ನೀವು ತಂದೆಯನ್ನು ತಿಳಿದುಕೊಂಡಿರುವುದರಿಂದ ನಿಮಗೆ ಬರೆಯುತ್ತೇನೆ. ತಂದೆಗಳೇ, ಆದಿಯಿಂದ ಇರುವ ದೇವರನ್ನು ನೀವು ಬಲ್ಲವರಾಗಿರುವುದರಿಂದ ನಿಮಗೆ ಬರೆದಿದ್ದೇನೆ. ಯೌವನಸ್ಥರೇ, ನೀವು ಬಲ ಹೊಂದಿರುವುದರಿಂದಲೂ ದೇವರ ವಾಕ್ಯವು ನಿಮ್ಮಲ್ಲಿ ನೆಲೆಗೊಂಡಿರುವುದರಿಂದಲೂ ನೀವು ಕೆಡುಕನನ್ನು ಜಯಿಸಿರುವುದರಿಂದಲೂ ನಿಮಗೆ ಬರೆದಿದ್ದೇನೆ.</verse>
				<verse number="15">ಲೋಕವನ್ನಾಗಲಿ, ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಪ್ರೀತಿಯು ಅವನಲ್ಲಿಲ್ಲ.</verse>
				<verse number="16">ಏಕೆಂದರೆ ಲೋಕದಲ್ಲಿರುವ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಯಿಂದ ಬಂದವುಗಳಲ್ಲ, ಲೋಕದಿಂದ ಬಂದವುಗಳಾಗಿವೆ.</verse>
				<verse number="17">ಲೋಕವೂ ಲೋಕದ ಆಶೆಗಳೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಜೀವಿಸುವನು.</verse>
				<verse number="18">ಪ್ರಿಯ ಮಕ್ಕಳೇ, ಇದು ಅಂತ್ಯ ಕಾಲವಾಗಿದೆ. ಕ್ರಿಸ್ತವಿರೋಧಿಯು ಬರುತ್ತಾನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳಿದ್ದಾರೆ. ಇದರಿಂದ ಇದು ಕಡೇ ಗಳಿಗೆಯಾಗಿದೆ ಎಂದು ನಾವು ತಿಳಿದುಕೊಳ್ಳುತ್ತೇವೆ.</verse>
				<verse number="19">ಅವರು ನಮ್ಮಿಂದ ಹೊರಟು ಹೋದರು. ಆದರೆ ಅವರು ನಮ್ಮವರಾಗಿರಲಿಲ್ಲ. ಏಕೆಂದರೆ ಅವರು ನಮ್ಮವರಾಗಿದ್ದರೆ, ನಮ್ಮ ಜೊತೆಯಲ್ಲೇ ಇರುತ್ತಿದ್ದರು. ಆದರೆ ಅವರು ನಮ್ಮಿಂದ ಹೊರಟು ಹೋದುದರಿಂದ ಅವರೆಲ್ಲರೂ ನಮ್ಮವರಲ್ಲವೆಂಬುದು ತೋರಿಬಂತು.</verse>
				<verse number="20">ಆದರೆ ನೀವು ಪವಿತ್ರವಾದವರಿಂದ ಅಭಿಷೇಕವನ್ನು ಹೊಂದಿದವರಾಗಿದ್ದು ನೀವೆಲ್ಲರೂ ಸತ್ಯವನ್ನು ತಿಳಿದವರಾಗಿದ್ದೀರಿ.</verse>
				<verse number="21">ನೀವು ಸತ್ಯವನ್ನು ತಿಳಿಯದವರೆಂದು ನಾನು ಭಾವಿಸುತ್ತಿಲ್ಲ, ನೀವು ಸತ್ಯವನ್ನು ತಿಳಿದಿರುವುದರಿಂದಲೂ ಯಾವ ಸುಳ್ಳೂ ಸತ್ಯದಿಂದ ಬರುವುದಿಲ್ಲ ಎಂಬುವುದನ್ನು ನೀವು ತಿಳಿದವರಾಗಿರುವುದರಿಂದಲೂ ನಾನು ನಿಮಗೆ ಬರೆದೆನು.</verse>
				<verse number="22">ಸುಳ್ಳುಗಾರನು ಯಾರು? ಮನುಷ್ಯನಾಗಿ ಬಂದ ಯೇಸುವು ಕ್ರಿಸ್ತ ಅಲ್ಲ ಎಂದು ಯಾವನು ಅಲ್ಲಗಳೆಯುತ್ತಾನೋ ಅವನೇ ಸುಳ್ಳುಗಾರನು. ಅವನೇ ತಂದೆಯನ್ನೂ ಮಗನನ್ನೂ ಅಲ್ಲಗಳೆಯುವ ಕ್ರಿಸ್ತವಿರೋಧಿಯಾಗಿದ್ದಾನೆ.</verse>
				<verse number="23">ಮಗನನ್ನು ಅಲ್ಲಗಳೆಯುವವನು ತಂದೆಯನ್ನೂ ಅಲ್ಲಗಳೆಯುತ್ತಾನೆ. ಮಗನನ್ನು ಅಂಗೀಕರಿಸುವವನು ತಂದೆಯನ್ನೂ ಅಂಗೀಕರಿಸುತ್ತಾನೆ.</verse>
				<verse number="24">ನೀವಂತೂ ಯಾವುದನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಹಾಗಿದ್ದರೆ, ನೀವು ಸಹ ಮಗನಲ್ಲಿಯೂ ತಂದೆಯಲ್ಲಿಯೂ ನೆಲೆಗೊಂಡಿರುತ್ತೀರಿ.</verse>
				<verse number="25">ಇದೇ ಕ್ರಿಸ್ತ ಯೇಸು ನಮಗೆ ವಾಗ್ದಾನ ಮಾಡಿರುವ ನಿತ್ಯಜೀವವಾಗಿರುತ್ತದೆ.</verse>
				<verse number="26">ನಿಮ್ಮನ್ನು ವಂಚಿಸುವವರ ವಿಷಯವಾಗಿ ಇವುಗಳನ್ನು ನಾನು ನಿಮಗೆ ಬರೆದಿದ್ದೇನೆ.</verse>
				<verse number="27">ಆದರೆ ಕ್ರಿಸ್ತ ಯೇಸುವಿನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುತ್ತದೆ. ಆದುದರಿಂದ ಬೇರೆ ಯಾರೂ ನಿಮಗೆ ಬೋಧಿಸುವ ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಬೋಧಿಸುವುದು. ಆ ಬೋಧನೆಯು ಸುಳ್ಳಲ್ಲ, ಸತ್ಯವಾದದ್ದು. ಆದ್ದರಿಂದ ಅದು ನಿಮಗೆ ಬೋಧಿಸಿದ ಪ್ರಕಾರವೇ, ಕ್ರಿಸ್ತ ಯೇಸುವಿನಲ್ಲಿ ನೀವು ನೆಲೆಗೊಳ್ಳಿರಿ.</verse>
				<verse number="28">ಪ್ರಿಯ ಮಕ್ಕಳೇ, ಕ್ರಿಸ್ತ ಯೇಸು ಪ್ರತ್ಯಕ್ಷವಾಗುವಾಗ ನೀವು ಅವರ ಆಗಮನದಲ್ಲಿ ಅವರ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಳ್ಳಿರಿ.</verse>
				<verse number="29">ದೇವರು ನೀತಿವಂತರಾಗಿದ್ದಾರೆಂಬುದು ನಿಮಗೆ ಗೊತ್ತಾಗಿದ್ದರೆ, ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನೂ ಅವರಿಂದ ಹುಟ್ಟಿದವನೆಂದು ನೀವು ತಿಳಿದಿರಬೇಕು.</verse>
			</chapter>
			<chapter number="3">
				<verse number="1">ಇಗೋ, ನಾವು ದೇವರ ಮಕ್ಕಳೆಂದು ಕರೆಯುವುದರಲ್ಲಿ ತಂದೆಯು ಎಂಥಾ ಮಹಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾರಲ್ಲಾ! ನಿಜಕ್ಕೂ ನಾವು ದೇವರ ಮಕ್ಕಳಾಗಿದ್ದೇವೆ. ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳುವುದಿಲ್ಲ, ಏಕೆಂದರೆ ಅದು ತಂದೆಯನ್ನು ತಿಳಿದುಕೊಳ್ಳಲಿಲ್ಲ.</verse>
				<verse number="2">ಪ್ರಿಯರೇ, ನಾವು ಈಗ ದೇವರ ಮಕ್ಕಳಾಗಿದ್ದೇವೆ. ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತಕ್ಷವಾಗಲಿಲ್ಲ. ಕ್ರಿಸ್ತ ಯೇಸು ಪ್ರತ್ಯಕ್ಷರಾದಾಗ ನಾವು ಅವರ ಹಾಗಿರುವೆವೆಂದು ಬಲ್ಲೆವು. ಏಕೆಂದರೆ ನಾವು ಅವರನ್ನು ಅವರಿರುವ ಪ್ರಕಾರವೇ ನೋಡುವೆವು.</verse>
				<verse number="3">ಕ್ರಿಸ್ತ ಯೇಸುವಿನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.</verse>
				<verse number="4">ಪಾಪಮಾಡುವ ಪ್ರತಿಯೊಬ್ಬನೂ ನಿಯಮವನ್ನು ಮೀರುವವನಾಗಿದ್ದಾನೆ. ನಿಯಮವನ್ನು ಮೀರುವುದೇ ಪಾಪ.</verse>
				<verse number="5">ಪಾಪಗಳನ್ನು ನಿವಾರಣೆ ಮಾಡುವುದಕ್ಕಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾದರೆಂಬುದು ನಿಮಗೆ ಗೊತ್ತಾಗಿದೆ. ಕ್ರಿಸ್ತ ಯೇಸುವಿನಲ್ಲಿ ಪಾಪವಿಲ್ಲ.</verse>
				<verse number="6">ಕ್ರಿಸ್ತ ಯೇಸುವಿನಲ್ಲಿ ನೆಲೆಗೊಂಡಿರುವವರು ಪಾಪದಲ್ಲಿ ಮುಂದುವರಿಯುವುದಿಲ್ಲ. ಪಾಪದಲ್ಲಿ ಮುಂದುವರೆಯುವವರು ಕ್ರಿಸ್ತ ಯೇಸುವನ್ನು ಕಂಡವರೂ ಅಲ್ಲ, ತಿಳಿದವರೂ ಅಲ್ಲ.</verse>
				<verse number="7">ಪ್ರಿಯ ಮಕ್ಕಳೇ, ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಕ್ರಿಸ್ತ ಯೇಸು ಹೇಗೆ ನೀತಿವಂತರಾಗಿದ್ದಾರೋ ಹಾಗೆಯೇ ನೀತಿಯನ್ನು ಅನುಸರಿಸುವವರು ನೀತಿವಂತರಾಗಿದ್ದಾರೆ.</verse>
				<verse number="8">ಪಾಪದಲ್ಲಿ ಮುಂದುವರೆಯುವವರು ಸೈತಾನನಿಗೆ ಸೇರಿದವರು. ಏಕೆಂದರೆ ಆದಿಯಿಂದಲೂ ಸೈತಾನನು ಪಾಪಮಾಡುವವನಾಗಿದ್ದಾನೆ. ಆದ್ದರಿಂದ ದೇವಪುತ್ರ ಯೇಸು ಸೈತಾನನ ಕೆಲಸಗಳನ್ನು ಲಯ ಮಾಡುವುದಕ್ಕೋಸ್ಕರವೇ ಪ್ರತ್ಯಕ್ಷರಾದರು.</verse>
				<verse number="9">ದೇವರಿಂದ ಹುಟ್ಟಿದವನು ಪಾಪವನ್ನು ಅಭ್ಯಾಸ ಮಾಡಲಾರನು, ಏಕೆಂದರೆ ದೇವರ ಬೀಜವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪ ಅಭ್ಯಾಸ ಮಾಡುವುದು ಅವನಿಗೆ ಅಸಾಧ್ಯ.</verse>
				<verse number="10">ಇವರು ದೇವರ ಮಕ್ಕಳೆಂಬುದೂ ಅವರು ಸೈತಾನನ ಮಕ್ಕಳೆಂಬುದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರ ಮಗುವಲ್ಲ.</verse>
				<verse number="11">ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನೀವು ಮೊದಲಿನಿಂದಲೂ ಕೇಳಿದ ಸಂದೇಶವಾಗಿದೆ.</verse>
				<verse number="12">ಕೆಡುಕನಾಗಿದ್ದ ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ಅಲ್ಲ. ಅವನು ಯಾವ ಕಾರಣದಿಂದ ತಮ್ಮನನ್ನು ಕೊಂದುಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ ಅಲ್ಲವೇ?</verse>
				<verse number="13">ನನ್ನ ಪ್ರಿಯರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.</verse>
				<verse number="14">ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವುದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬುದು ನಮಗೆ ಗೊತ್ತಾಗಿದೆ. ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.</verse>
				<verse number="15">ತನ್ನ ಸಹೋದರನನ್ನು ದ್ವೇಷಿಸುವ ಯಾರೇ ಆದರೂ ಕೊಲೆಗಾರನಾಗಿದ್ದಾನೆ ಮತ್ತು ಯಾವ ಕೊಲೆಗಾರನಲ್ಲಿಯೂ ನಿತ್ಯಜೀವವು ಇರುವುದಿಲ್ಲವೆಂಬುದು ನಿಮಗೆ ಗೊತ್ತಾಗಿದೆ.</verse>
				<verse number="16">ಕ್ರಿಸ್ತ ಯೇಸುವು ನಮಗೋಸ್ಕರ ತಮ್ಮ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರ ಸಹೋದರಿಯರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವವರಾಗಿದ್ದೇವೆ.</verse>
				<verse number="17">ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರ ಸಹೋದರಿಯರನ್ನು ನೋಡಿ, ಕರುಣೆ ತೋರಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವುದು ಹೇಗೆ?</verse>
				<verse number="18">ನನ್ನ ಪ್ರಿಯ ಮಕ್ಕಳೇ, ನೀವು ಬರೀಮಾತಿನಿಂದಾಗಲಿ, ಹೊಗಳಿಕೆಯ ಮಾತಿನಿಂದಾಗಲಿ ಪ್ರೀತಿಸುವವರಾಗಿರದೆ ಕ್ರಿಯೆಯಲ್ಲಿಯೂ ಸತ್ಯದಲ್ಲಿಯೂ ಪ್ರೀತಿಸುವವರಾಗಿರಬೇಕು.</verse>
				<verse number="19">ದೇವರ ಸಮಕ್ಷಮದಲ್ಲಿ ನಾವು ನಮ್ಮ ಹೃದಯವನ್ನು ವಿಶ್ರಾಂತಿಗೊಳಿಸಿರುವುದರಿಂದ ನಾವು ಸತ್ಯಕ್ಕೆ ಸೇರಿದವರು ಎಂಬುದು ಇದರಿಂದಲೇ ನಮಗೆ ತಿಳಿಯುತ್ತದೆ:</verse>
				<verse number="20">ಏಕೆಂದರೆ ನಮ್ಮ ಹೃದಯವು ನಮ್ಮನ್ನು ಅಪರಾಧಿ ಎಂದು ಖಂಡಿಸುವಾಗಲೆಲ್ಲಾ, ನಮ್ಮ ಹೃದಯಕ್ಕಿಂತ ದೇವರು ದೊಡ್ಡವರಾಗಿದ್ದಾರೆಂತಲೂ ದೇವರು ಎಲ್ಲವನ್ನೂ ಬಲ್ಲವರಾಗಿದ್ದಾರೆಂತಲೂ ತಿಳಿದುಕೊಳ್ಳಿರಿ.</verse>
				<verse number="21">ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಅಪರಾಧಿ ಎಂದು ಖಂಡಿಸದಿದ್ದರೆ ದೇವರ ಮುಂದೆ ಆತ್ಮವಿಶ್ವಾಸ ನಮಗಿರುವುದು.</verse>
				<verse number="22">ಮತ್ತು ನಾವು ಏನೇನು ಬೇಡಿಕೊಳ್ಳುತ್ತೇವೋ ಅದನ್ನು ದೇವರಿಂದ ನಾವು ಹೊಂದಿಕೊಳ್ಳುತ್ತೇವೆ. ಏಕೆಂದರೆ ನಾವು ಅವರ ಆಜ್ಞೆಗಳನ್ನು ಕೈಗೊಂಡು ಅವರ ದೃಷ್ಟಿಯಲ್ಲಿ ಮೆಚ್ಚಿಗೆಯಾದವುಗಳನ್ನು ಮಾಡುವವರಾಗಿದ್ದೇವೆ.</verse>
				<verse number="23">ನಾವು ದೇವರ ಪುತ್ರ ಆಗಿರುವ ಯೇಸುಕ್ರಿಸ್ತರ ಹೆಸರನ್ನು ನಂಬಿ, ಅವರು ನಮಗೆ ಆಜ್ಞಾಪಿಸಿದ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ದೇವರ ಆಜ್ಞೆಯಾಗಿರುತ್ತದೆ.</verse>
				<verse number="24">ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವವನು ದೇವರಲ್ಲಿ ವಾಸಮಾಡುತ್ತಾನೆ ಮತ್ತು ದೇವರು ಅವನಲ್ಲಿ ವಾಸಮಾಡುತ್ತಾರೆ. ದೇವರು ನಮ್ಮಲ್ಲಿ ವಾಸಮಾಡುತ್ತಾರೆಂದು ದೇವರು ನಮಗೆ ದಯಪಾಲಿಸಿದ ಆತ್ಮನಿಂದಲೇ ನಾವು ಬಲ್ಲೆವು.</verse>
			</chapter>
			<chapter number="4">
				<verse number="1">ಪ್ರಿಯ ಸ್ನೇಹಿತರೇ, ಅನೇಕ ಸುಳ್ಳು ಪ್ರವಾದಿಗಳು ಲೋಕದೊಳಗೆ ಹೋಗಿರುವುದರಿಂದ ನೀವು ಎಲ್ಲಾ ಆತ್ಮಗಳನ್ನು ನಂಬದೆ ಆಯಾ ಆತ್ಮಗಳು ದೇವರಿಗೆ ಸಂಬಂಧವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.</verse>
				<verse number="2">ನೀವು ದೇವರಾತ್ಮನನ್ನು ಹೀಗೆ ಗುರುತಿಸಬಹುದು: ಕ್ರಿಸ್ತ ಯೇಸು ನರಮಾಂಸರಾಗಿ ಬಂದರೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದು.</verse>
				<verse number="3">ನರಮಾಂಸದಲ್ಲಿ ಬಂದ ಯೇಸುವನ್ನು ಒಪ್ಪಿಕೊಳ್ಳದಿರುವ ಪ್ರತಿಯೊಂದು ಆತ್ಮವು ದೇವರಿಂದ ಬಂದದ್ದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮವಾಗಿದೆ. ಅದು ಬರುವುದೆಂಬುದನ್ನು ನೀವು ಕೇಳಿದ್ದೀರಲ್ಲಾ. ಈಗಲೂ ಅದು ಲೋಕದಲ್ಲಿ ಇದೆ.</verse>
				<verse number="4">ಪ್ರಿಯ ಮಕ್ಕಳೇ, ನೀವು ದೇವರಿಗೆ ಸೇರಿದವರಾಗಿದ್ದೀರಿ, ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ. ಏಕೆಂದರೆ ನಿಮ್ಮಲ್ಲಿರುವ ದೇವರು ಲೋಕದಲ್ಲಿ ಇರುವವನಿಗಿಂತ ದೊಡ್ಡವರಾಗಿದ್ದಾರೆ.</verse>
				<verse number="5">ಅವರು ಲೋಕಕ್ಕೆ ಸೇರಿದವರಾಗಿದ್ದಾರೆ. ಈ ಕಾರಣದಿಂದ ಅವರು ಲೋಕ ಸಂಬಂಧವಾಗಿ ಮಾತನಾಡುತ್ತಾರೆ ಮತ್ತು ಲೋಕದವರು ಅವರ ಮಾತನ್ನು ಕೇಳುತ್ತಾರೆ.</verse>
				<verse number="6">ನಾವಂತೂ ದೇವರಿಗೆ ಸೇರಿದವರಾಗಿದ್ದೇವೆ. ದೇವರನ್ನು ಬಲ್ಲವರು ನಮ್ಮ ಮಾತನ್ನು ಕೇಳುತ್ತಾರೆ. ದೇವರಿಗೆ ಸೇರದವರು ನಮ್ಮ ಮಾತನ್ನು ಕೇಳುವುದಿಲ್ಲ. ಇದು ಸತ್ಯದ ಆತ್ಮ. ಅದು ಸುಳ್ಳಿನ ಆತ್ಮ ಎಂದು ಇದರಿಂದಲೇ ನಾವು ತಿಳಿದುಕೊಳ್ಳುತ್ತೇವೆ.</verse>
				<verse number="7">ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಏಕೆಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರೂ ದೇವರನ್ನು ಬಲ್ಲವರೂ ಆಗಿದ್ದಾರೆ.</verse>
				<verse number="8">ಪ್ರೀತಿಯಿಲ್ಲದವರು ದೇವರನ್ನು ಬಲ್ಲವರಲ್ಲ. ಏಕೆಂದರೆ ದೇವರು ಪ್ರೀತಿಯಾಗಿದ್ದಾರೆ.</verse>
				<verse number="9">ತಮ್ಮ ಏಕೈಕ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮೂಲಕ ನಾವು ಜೀವಿಸುವುದಕ್ಕಾಗಿ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ಇದರಿಂದಲೇ ದೇವರು ತಮ್ಮ ಪ್ರೀತಿಯನ್ನು ನಮ್ಮ ನಡುವೆ ತೋರಿಸಿದರು.</verse>
				<verse number="10">ಪ್ರೀತಿಯು ಇದಾಗಿರುತ್ತದೆ: ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ದೇವರೇ ನಮ್ಮನ್ನು ಪ್ರೀತಿಸಿ, ನಮ್ಮ ಪಾಪಗಳಿಗೆ ಪ್ರಾಯಶ್ಚಿತ್ತ ಬಲಿಯಾಗಿ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಕಳುಹಿಸಿ ಕೊಟ್ಟಿದ್ದರಲ್ಲಿಯೇ ಅವರ ಸತ್ಯ ಪ್ರೀತಿಯು ತೋರಿಬರುತ್ತದೆ.</verse>
				<verse number="11">ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು.</verse>
				<verse number="12">ದೇವರನ್ನು ಯಾರೂ ಎಂದೂ ನೋಡಿಲ್ಲ, ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರು ನಮ್ಮಲ್ಲಿ ನೆಲೆಗೊಂಡಿದ್ದಾರೆ ಮತ್ತು ಅವರ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.</verse>
				<verse number="13">ದೇವರು ನಮಗೆ ತಮ್ಮ ಆತ್ಮವನ್ನು ಕೊಟ್ಟಿರುವುದರಿಂದಲೇ, ನಾವು ದೇವರಲ್ಲಿಯೂ ದೇವರು ನಮ್ಮಲ್ಲಿಯೂ ಬಾಳುವವರಾಗಿದ್ದಾರೆಂದು ತಿಳಿದುಕೊಳ್ಳುತ್ತೇವೆ.</verse>
				<verse number="14">ತಂದೆಯು ಮಗನನ್ನು ಲೋಕ ರಕ್ಷಕರನ್ನಾಗಿ ಕಳುಹಿಸಿಕೊಟ್ಟಿರುವುದನ್ನು ನಾವು ನೋಡಿದ್ದೇವೆ ಮತ್ತು ಅದಕ್ಕೆ ನಾವು ಸಾಕ್ಷಿ ಹೇಳುತ್ತೇವೆ.</verse>
				<verse number="15">ಯೇಸು ದೇವರ ಪುತ್ರರಾಗಿದ್ದಾರೆಂದು ಯಾರು ಒಪ್ಪಿಕೊಳ್ಳುತ್ತಾರೋ, ಅವರಲ್ಲಿ ದೇವರು ಬಾಳುತ್ತಾರೆ ಮತ್ತು ಅವರು ದೇವರಲ್ಲಿ ಬಾಳುವವರಾಗಿದ್ದಾರೆ.</verse>
				<verse number="16">ದೇವರು ನಮ್ಮನ್ನು ಪ್ರೀತಿಸುತ್ತಾರೆಂದು ನಾವು ತಿಳಿದುಕೊಂಡಿದ್ದೇವೆ ಮತ್ತು ಅದನ್ನು ನಂಬಿದ್ದೇವೆ. ದೇವರು ಪ್ರೀತಿಯಾಗಿದ್ದಾರೆ, ಪ್ರೀತಿಯಲ್ಲಿ ಬಾಳುವವರು ದೇವರಲ್ಲಿ ಬಾಳುವವರಾಗಿದ್ದಾರೆ, ದೇವರು ಅವರಲ್ಲಿ ಬಾಳುವವರಾಗಿದ್ದಾರೆ.</verse>
				<verse number="17">ನ್ಯಾಯತೀರ್ಪಿನ ದಿನದಲ್ಲಿ ನಮಗೆ ಧೈರ್ಯವಿರುವಂತೆ ನಮ್ಮ ಪ್ರೀತಿಯು ಸಿದ್ಧಿಗೆ ಬಂತು. ಏಕೆಂದರೆ ಯೇಸು ಎಂಥವರಾಗಿದ್ದಾರೋ ನಾವು ಅಂಥವರಾಗಿಯೇ ಈ ಲೋಕದಲ್ಲಿದ್ದೇವೆ.</verse>
				<verse number="18">ಪ್ರೀತಿಯಲ್ಲಿ ಹೆದರಿಕೆಯಿಲ್ಲ ಆದರೆ ಪೂರ್ಣ ಪ್ರೀತಿಯು ಹೆದರಿಕೆಯನ್ನು ಹೊರಡಿಸಿಬಿಡುತ್ತದೆ. ಏಕೆಂದರೆ ಭಯವಿರುವಲ್ಲಿ ಯಾತನೆಯಿರುವುದು. ಭಯಪಡುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.</verse>
				<verse number="19">ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ದೇವರನ್ನು ಪ್ರೀತಿಸುತ್ತೇವೆ.</verse>
				<verse number="20">ಒಬ್ಬನು, “ನಾನು ದೇವರನ್ನು ಪ್ರೀತಿಸುತ್ತೇನೆ,” ಎಂದು ಹೇಳಿ ತನ್ನ ಸಹೋದರರನ್ನು ದ್ವೇಷ ಮಾಡಿದರೆ, ಅವನು ಸುಳ್ಳುಗಾರನಾಗಿದ್ದಾನೆ. ಏಕೆಂದರೆ ತಾನು ಕಾಣುವ ಸಹೋದರನನ್ನು ಪ್ರೀತಿಸದವನು, ಕಾಣದಿರುವ ದೇವರನ್ನು ಪ್ರೀತಿಸಲಾರನು.</verse>
				<verse number="21">ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಸಹೋದರಿಯನ್ನೂ ಪ್ರೀತಿಸಬೇಕೆಂಬ ಈ ಆಜ್ಞೆಯನ್ನು ನಾವು ದೇವರಿಂದ ಹೊಂದಿದ್ದೇವೆ.</verse>
			</chapter>
			<chapter number="5">
				<verse number="1">ಯೇಸುವೇ ಕ್ರಿಸ್ತ ಎಂದು ನಂಬುವ ಪ್ರತಿಯೊಬ್ಬರೂ ದೇವರಿಂದ ಹುಟ್ಟಿದವರಾಗಿದ್ದಾರೆ. ತಂದೆಯನ್ನು ಪ್ರೀತಿಸುವ ಪ್ರತಿಯೊಬ್ಬರು ದೇವರಿಂದ ಹುಟ್ಟಿದವರನ್ನು ಸಹ ಪ್ರೀತಿಸುತ್ತಾರೆ.</verse>
				<verse number="2">ನಾವು ದೇವರನ್ನು ಪ್ರೀತಿಸಿ, ಅವರ ಆಜ್ಞೆಗಳನ್ನು ಅನುಸರಿಸುವುದರಿಂದಲೇ ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದನ್ನು ತಿಳಿದುಕೊಳ್ಳುತ್ತೇವೆ.</verse>
				<verse number="3">ದೇವರ ಪ್ರೀತಿ ಏನೆಂದರೆ: ದೇವರ ಆಜ್ಞೆಗಳನ್ನು ಕೈಗೊಂಡು ನಡೆಯುವುದೇ. ಅವರ ಆಜ್ಞೆಗಳು ಕಠಿಣವಾದವುಗಳಲ್ಲ.</verse>
				<verse number="4">ದೇವರಿಂದ ಹುಟ್ಟಿರುವ ಪ್ರತಿಯೊಬ್ಬರು ಲೋಕವನ್ನು ಜಯಿಸುತ್ತಾರೆ. ಲೋಕವನ್ನು ಜಯಿಸುವಂಥದು ನಮ್ಮ ನಂಬಿಕೆಯೇ.</verse>
				<verse number="5">ಯೇಸುವು ದೇವಪುತ್ರ ಎಂದು ನಂಬಿದವರೇ ಹೊರತು ಲೋಕವನ್ನು ಜಯಿಸುವವರು ಯಾರು?</verse>
				<verse number="6">ಕ್ರಿಸ್ತ ಯೇಸುವೇ ನೀರಿನಿಂದಲೂ ರಕ್ತದಿಂದಲೂ ಬಂದವರು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ ರಕ್ತದಿಂದಲೂ ಬಂದರು, ಇದಕ್ಕೆ ಸಾಕ್ಷಿಕೊಡುವವರು ಪವಿತ್ರಾತ್ಮ ದೇವರೇ, ಏಕೆಂದರೆ ಪವಿತ್ರಾತ್ಮ ದೇವರು ಸತ್ಯವಾಗಿದ್ದಾರೆ.</verse>
				<verse number="7">ಇದಲ್ಲದೆ ಸಾಕ್ಷಿಕೊಡುವವರು ಮೂವರಿದ್ದಾರೆ.</verse>
				<verse number="8">ಆತ್ಮ, ಜಲ, ರಕ್ತ ಎಂಬ ಮೂರು ಸಾಕ್ಷಿಗಳು ಇವೆ. ಇವು ಕೊಡುವ ಸಾಕ್ಷಿ ಒಂದೇ ಆಗಿರುತ್ತದೆ.</verse>
				<verse number="9">ನಾವು ಮನುಷ್ಯರ ಸಾಕ್ಷಿಯನ್ನು ತೆಗೆದುಕೊಳ್ಳುವುದಾದರೆ ದೇವರ ಸಾಕ್ಷಿಯು ಅದಕ್ಕಿಂತ ದೊಡ್ಡದಾಗಿದೆಯಲ್ಲಾ. ಏಕೆಂದರೆ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ವಿಷಯದಲ್ಲಿ ದೇವರು ಕೊಟ್ಟ ಸಾಕ್ಷಿಯು ಇದೇ ಆಗಿದೆ.</verse>
				<verse number="10">ದೇವಪುತ್ರ ಕ್ರಿಸ್ತ ಯೇಸುವಿನಲ್ಲಿ ನಂಬಿಕೆ ಇಟ್ಟವರು ಆ ಸಾಕ್ಷಿಯನ್ನು ಸ್ವೀಕರಿಸುತ್ತಾರೆ. ದೇವರನ್ನು ನಂಬದವರು ದೇವರನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾರೆ. ಹೇಗೆಂದರೆ ದೇವರು ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅಂಥವರು ನಂಬಿಕೆಯಿಡಲಿಲ್ಲ.</verse>
				<verse number="11">ಆ ಸಾಕ್ಷಿ ಯಾವುದೆಂದರೆ: ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಈ ಜೀವವು ದೇವರ ಪುತ್ರ ಕ್ರಿಸ್ತ ಯೇಸುವಿನಲ್ಲಿ ಇದೆ ಎಂಬುದೇ.</verse>
				<verse number="12">ಯಾರು ಪುತ್ರ ಆಗಿರುವ ಕ್ರಿಸ್ತ ಯೇಸುವನ್ನು ಹೊಂದಿದ್ದಾರೊ ಅವರಿಗೆ ಜೀವವಿದೆ. ಯಾರಲ್ಲಿ ದೇವರ ಪುತ್ರ ಆಗಿರುವ ಕ್ರಿಸ್ತ ಯೇಸು ಇರುವುದಿಲ್ಲವೋ ಅಂಥವರಿಗೆ ಜೀವವಿಲ್ಲ.</verse>
				<verse number="13">ದೇವಪುತ್ರ ಆಗಿರುವವರ ಹೆಸರಿನಲ್ಲಿ ನಂಬಿಕೆಯಿಡುವ ನಿಮಗೆ ನಿತ್ಯಜೀವವು ಉಂಟೆಂದು ನೀವು ತಿಳಿಯುವ ಹಾಗೆ ನಾನು ನಿಮಗೆ ಇವುಗಳನ್ನು ಬರೆದಿದ್ದೇನೆ.</verse>
				<verse number="14">ದೇವರ ಚಿತ್ತಾನುಸಾರವಾಗಿ ನಾವು ಏನಾದರೂ ಬೇಡಿಕೊಂಡರೆ, ದೇವರು ಕೇಳುತ್ತಾರೆ. ಇದೇ ದೇವರಲ್ಲಿ ನಮಗಿರುವ ನಿಶ್ಚಯ.</verse>
				<verse number="15">ನಾವು ಏನು ಬೇಡಿಕೊಂಡರೂ ದೇವರು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾರೆ ಎಂದು ತಿಳಿದಿದ್ದರೆ, ನಾವು ಬೇಡಿದವುಗಳು ನಮಗೆ ದೊರೆಯುತ್ತವೆ ಎಂಬ ದೃಢನಿಶ್ಚಯ ನಮಗಿದೆ.</verse>
				<verse number="16">ಮರಣಕರವಲ್ಲದ ಪಾಪವನ್ನು ಮಾಡುವ ಸಹೋದರ ಅಥವಾ ಸಹೋದರಿಯನ್ನು ಯಾರಾದರೂ ಕಂಡರೆ, ಆ ಸಹೋದರ ಅಥವಾ ಸಹೋದರಿಯರಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಅವರಿಗೆ ಜೀವವನ್ನು ದಯಪಾಲಿಸುವರು. ಮರಣಕರವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಆದರೆ ಮರಣಕರವಾದ ಪಾಪವೂ ಉಂಟು. ಈ ಮರಣಕರವಾದ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.</verse>
				<verse number="17">ಅನೀತಿಯೆಲ್ಲವೂ ಪಾಪವಾಗಿದೆ. ಆದರೂ ಮರಣಕರವಲ್ಲದ ಪಾಪವುಂಟು.</verse>
				<verse number="18">ದೇವರಿಂದ ಹುಟ್ಟಿರುವವರು ಪಾಪದಲ್ಲಿ ಮುಂದುವರೆಯುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವರನ್ನು ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ಅಂಥವರನ್ನು ಕಾಪಾಡುವರು, ಕೆಡುಕನು ಅಂಥವರನ್ನು ಮುಟ್ಟುವುದಿಲ್ಲ.</verse>
				<verse number="19">ನಾವು ದೇವರ ಮಕ್ಕಳೆಂದೂ ಲೋಕವೆಲ್ಲವು ಕೆಡುಕನ ನಿಯಂತ್ರಣದಲ್ಲಿ ಇದೆ ಎಂದೂ ನಮಗೆ ಗೊತ್ತಿದೆ.</verse>
				<verse number="20">ದೇವರ ಪುತ್ರ ಆಗಿರುವ ಕ್ರಿಸ್ತ ಯೇಸುವು ಬಂದು, ಸತ್ಯವಾಗಿರುವ ದೇವರನ್ನು ನಾವು ಅರಿತುಕೊಳ್ಳುವ ಹಾಗೆ ಅವರು ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾರೆಂದೂ ನಾವು ಸತ್ಯವಾಗಿರುವ ದೇವರಲ್ಲಿ ಅವರ ಪುತ್ರ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವವರಾಗಿದ್ದೇವೆ ಎಂದೂ ನಮಗೆ ಗೊತ್ತಿದೆ. ಈ ಕ್ರಿಸ್ತ ಯೇಸುವೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾರೆ.</verse>
				<verse number="21">ಪ್ರಿಯ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ.</verse>
			</chapter>
		</book>
		<book number="63">
			<chapter number="1">
				<verse number="1">ಸಭಾಹಿರಿಯನಾದ ನಾನು, ನಮ್ಮಲ್ಲಿ ವಾಸಿಸುವ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿ ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ</verse>
				<verse number="2">ಸತ್ಯದಲ್ಲಿ ಪ್ರೀತಿಸುವ ದೇವರಿಂದ ಆಯ್ಕೆಯಾದ ಅಮ್ಮನವರಿಗೂ ಆಕೆಯ ಮಕ್ಕಳಿಗೂ ಬರೆಯುವುದೇನೆಂದರೆ:</verse>
				<verse number="3">ತಂದೆಯಾದ ದೇವರಿಂದಲೂ ಆ ತಂದೆಯ ಪುತ್ರ ಆಗಿರುವ ಕರ್ತ ಕ್ರಿಸ್ತ ಯೇಸುವಿನಿಂದಲೂ ಕೃಪೆಯು, ಕರುಣೆಯು ಮತ್ತು ಶಾಂತಿಯು ಸತ್ಯಪೂರ್ವಕವಾಗಿ ಪ್ರೀತಿಪೂರ್ವಕವಾಗಿ ನಿಮ್ಮೊಂದಿಗಿರಲಿ.</verse>
				<verse number="4">ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವುದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು.</verse>
				<verse number="5">ಅಮ್ಮನವರೇ, ನಾನು ಹೊಸ ಆಜ್ಞೆಯನ್ನು ನಿನಗೆ ಬರೆಯದೆ ಮೊದಲಿನಿಂದಲೂ ನಮಗೆ ಇದ್ದ ಆಜ್ಞೆಯನ್ನು ನಿನಗೆ ಬರೆಯುವವನಾಗಿ ನಾವು ಒಬ್ಬರನ್ನೊಬ್ಬರು ಪ್ರೀತಿಸುವವರಾಗಿರಬೇಕೆಂದು ನಿನ್ನನ್ನು ಕೇಳಿಕೊಳ್ಳುತ್ತೇನೆ.</verse>
				<verse number="6">ದೇವರ ಆಜ್ಞೆಗಳನ್ನು ಅನುಸರಿಸಿ ಬಾಳುವುದೇ ಪ್ರೀತಿ. ಪ್ರೀತಿಯಲ್ಲಿ ಬಾಳಬೇಕೆಂಬುದೇ ನೀವು ಮೊದಲಿನಿಂದಲೂ ಕೇಳಿದ ಅಪ್ಪಣೆಯಾಗಿದೆ.</verse>
				<verse number="7">ಏಕೆಂದರೆ ನರಮಾಂಸದಲ್ಲಿ ಬಂದಿರುವ ಕ್ರಿಸ್ತ ಯೇಸುವನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವರೇ ಮೋಸಗಾರರೂ ಕ್ರಿಸ್ತವಿರೋಧಿಗಳೂ ಆಗಿದ್ದಾರೆ.</verse>
				<verse number="8">ಪರಿಪೂರ್ಣ ಪ್ರತಿಫಲವನ್ನು ನೀವು ಹೊಂದುವಂತೆ ನಾವು ಪ್ರಯಾಸಪಟ್ಟು ಮಾಡಿದವುಗಳು ನಷ್ಟವಾಗದಂತೆ ಎಚ್ಚರವಹಿಸಿರಿ.</verse>
				<verse number="9">ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳದೆ ಅದನ್ನು ಅತಿಕ್ರಮಿಸುವವರಿಗೆ ದೇವರಿಲ್ಲ. ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳುವವರಿಗೆ ತಂದೆ ಮತ್ತು ಪುತ್ರ ಇಬ್ಬರೂಇರುತ್ತಾರೆ.</verse>
				<verse number="10">ಈ ಬೋಧನೆಯನ್ನು ಒಪ್ಪದಿರುವ ಯಾರಾದರೂ ನಿಮ್ಮ ಬಳಿಗೆ ಬಂದರೆ, ಅವರನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವರಿಗೆ, “ವಂದನೆ” ಎಂದೂ ಹೇಳಬೇಡಿರಿ.</verse>
				<verse number="11">ಏಕೆಂದರೆ ಅವರಿಗೆ “ವಂದನೆ” ಎಂದು ಹೇಳುವವರು ಅವರ ದುಷ್ಕೃತ್ಯಗಳಲ್ಲಿ ಪಾಲುಗಾರರಾಗುತ್ತಾರೆ.</verse>
				<verse number="12">ನಿಮಗೆ ಬರೆಯುವುದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವುದಕ್ಕೆ ನನಗೆ ಮನಸ್ಸಿಲ್ಲ. ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾಮುಖಿಯಾಗಿ ಮಾತನಾಡುವೆನೆಂದು ನಿರೀಕ್ಷಿಸುತ್ತೇನೆ. ಆಗ ನಮ್ಮ ಸಂತೋಷವು ಪರಿಪೂರ್ಣವಾಗುವುದು.</verse>
				<verse number="13">ದೇವರಿಂದ ಆಯ್ಕೆಯಾದ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ.</verse>
			</chapter>
		</book>
		<book number="64">
			<chapter number="1">
				<verse number="1">ಹಿರಿಯನು, ಸತ್ಯದಲ್ಲಿ ಬಹಳವಾಗಿ ಪ್ರೀತಿಸುವ ಗಾಯನಿಗೆ ಬರೆಯುವುದು:</verse>
				<verse number="2">ಪ್ರಿಯ ಸ್ನೇಹಿತನೇ, ನಿನ್ನ ಆತ್ಮವು ಅಭಿವೃದ್ಧಿ ಹೊಂದಿರುವ ಪ್ರಕಾರವೇ, ಎಲ್ಲಾ ವಿಷಯಗಳಲ್ಲಿಯೂ ನೀನು ಆರೋಗ್ಯವೂ ಅಭಿವೃದ್ಧಿಯೂ ಹೊಂದಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ.</verse>
				<verse number="3">ನಿನ್ನಲ್ಲಿ ಸತ್ಯಕ್ಕಾಗಿರುವ ನಂಬಿಗಸ್ತಿಕೆಯ ಕುರಿತು ಸಹೋದರರು ಬಂದು ಸಾಕ್ಷೀಕರಿಸಿದ್ದರಿಂದ ನಾನು ಬಹಳವಾಗಿ ಸಂತೋಷಪಟ್ಟೆನು.</verse>
				<verse number="4">ನನ್ನ ಮಕ್ಕಳು ಸತ್ಯವನ್ನು ಅನುಸರಿಸಿ ಬಾಳುತ್ತಿದ್ದಾರೆಂದು ಕೇಳುವುದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.</verse>
				<verse number="5">ಪ್ರಿಯ ಸ್ನೇಹಿತನೇ, ಸಹೋದರರಿಗೂ ಪರಿಚಯವಿಲ್ಲದವರಿಗೂ ನೀನು ಮಾಡುವುದನ್ನೆಲ್ಲಾ ನಂಬಿಗಸ್ತನಾಗಿ ಮಾಡುತ್ತೀ.</verse>
				<verse number="6">ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ದೇವರು ಮೆಚ್ಚುವ ರೀತಿಯಲ್ಲಿ ಸಾಗಕಳುಹಿಸಿದರೆ ನೀನು ಒಳ್ಳೆಯದನ್ನು ಮಾಡುತ್ತೀ.</verse>
				<verse number="7">ಏಕೆಂದರೆ ಅವರು ಕ್ರಿಸ್ತ ಯೇಸುವಿನ ಹೆಸರಿನ ನಿಮಿತ್ತವಾಗಿ ಹೊರಟು ಹೋಗಿದ್ದಾರೆ. ಅವಿಶ್ವಾಸಿಗಳಿಂದ ಏನೂ ತೆಗೆದುಕೊಳ್ಳುವವರಲ್ಲ.</verse>
				<verse number="8">ಆದ್ದರಿಂದ ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ ಅಂಥವರನ್ನು ಉಪಚರಿಸಬೇಕು.</verse>
				<verse number="9">ಸಭೆಗೆ ನಾನು ಬರೆದಿದ್ದೆನು. ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವುದಿಲ್ಲ.</verse>
				<verse number="10">ಆದಕಾರಣ ನಾನು ಬಂದಾಗ ನಮ್ಮನ್ನು ದೂಷಿಸಿ ನಮ್ಮ ವಿಷಯದಲ್ಲಿ ಕೆಟ್ಟ ಕೆಟ್ಟ ಮಾತುಗಳನ್ನಾಡುವ ಅವನ ಕೃತ್ಯಗಳನ್ನು ಜ್ಞಾಪಕ ಮಾಡುವೆನು. ಅವನು ಇದರಲ್ಲಿ ತೃಪ್ತನಾಗದೆ, ಸಹೋದರರನ್ನು ತಾನೂ ಸೇರಿಸಿಕೊಳ್ಳದೆ, ಸೇರಿಸಿಕೊಳ್ಳಬೇಕೆಂದಿರುವವರಿಗೆ ಅಡ್ಡಿ ಮಾಡುತ್ತಾ, ಅವರನ್ನು ಸಭೆಯೊಳಗಿಂದ ಬಹಿಷ್ಕರಿಸುತ್ತಿದ್ದಾನೆ.</verse>
				<verse number="11">ಪ್ರಿಯ ಸ್ನೇಹಿತನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನು ಅನುಸರಿಸು. ಒಳ್ಳೆಯದನ್ನು ಮಾಡುವವನು ದೇವರಿಗೆ ಸೇರಿದವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ.</verse>
				<verse number="12">ದೇಮೇತ್ರಿಯನನ್ನು ಕುರಿತಾಗಿ ಎಲ್ಲರೂ ಒಳ್ಳೆಯದನ್ನೇ ಮಾತನಾಡುತ್ತಾರೆ. ಅಷ್ಟೇ ಅಲ್ಲದೆ ಸತ್ಯವೇ ಅವನ ಪರವಾಗಿ ಸಾಕ್ಷಿಕೊಡುತ್ತದೆ. ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.</verse>
				<verse number="13">ನಾನು ಬರೆಯತಕ್ಕ ಅನೇಕ ವಿಷಯಗಳಿವೆ. ಆದರೆ ಮಸಿ ಮತ್ತು ಲೇಖನಿಗಳಿಂದ ಬರೆಯುವುದಕ್ಕೆ ನನಗಿಷ್ಟವಿಲ್ಲ.</verse>
				<verse number="14">ಬೇಗನೆ ನಿನ್ನನ್ನು ನೋಡುವೆನೆಂದು ನಿರೀಕ್ಷಿಸುತ್ತೇನೆ. ಆಗ ಮುಖಾಮುಖಿಯಾಗಿ ನಾವು ಮಾತನಾಡುವೆವು.</verse>
				<verse number="15">ನಿನಗೆ ಶಾಂತಿ ಇರಲಿ. ನಮ್ಮ ಸ್ನೇಹಿತರು ನಿನಗೆ ವಂದನೆ ಹೇಳುತ್ತಾರೆ. ಸ್ನೇಹಿತರನ್ನು ಹೆಸರು ಹೆಸರಾಗಿ ವಂದಿಸು.</verse>
			</chapter>
		</book>
		<book number="65">
			<chapter number="1">
				<verse number="1">ಕ್ರಿಸ್ತ ಯೇಸುವಿನ ದಾಸನೂ ಯಾಕೋಬನ ಸಹೋದರನೂ ಆಗಿರುವ ಯೂದನು, ತಂದೆಯಾದ ದೇವರಿಗೆ ಪ್ರಿಯರಾದವವರಿಗೂ ಕ್ರಿಸ್ತ ಯೇಸು ಸುರಕ್ಷತೆಯನ್ನೂ ಅವರ ಕರೆಯುವಿಕೆಯನ್ನೂ ಹೊಂದಿದವರಿಗೆ ಬರೆಯುವ ಪತ್ರ:</verse>
				<verse number="2">ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಹೆಚ್ಚೆಚ್ಚಾಗಿ ದೊರೆಯಲಿ.</verse>
				<verse number="3">ಪ್ರಿಯ ಸ್ನೇಹಿತರೇ, ನಾವು ಹಂಚಿಕೊಳ್ಳುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಜಾಗ್ರತೆಯಿಂದ ಪ್ರಯತ್ನ ಮಾಡುತ್ತಿದ್ದಾಗ, ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲಾದ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.</verse>
				<verse number="4">ಏಕೆಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆಪಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡೆಸುವವರೂ ನಮ್ಮ ಒಬ್ಬರೇ ಕರ್ತ ಆಗಿರುವ ದೇವರನ್ನು ಮತ್ತು ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರನ್ನು ಅಲ್ಲಗಳೆಯುವ ಕೆಲವು ಜನರೂ ರಹಸ್ಯವಾಗಿ ಸಭೆಯೊಳಗೆ ಹೊಕ್ಕಿದ್ದಾರೆ. ಇವರು ದಂಡನೆಗೋಸ್ಕರ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ.</verse>
				<verse number="5">ಇದನ್ನು ನೀವು ಈಗಾಗಲೇ ಒಂದು ಸಾರಿ ತಿಳಿದವರಾಗಿದ್ದೀರಿ. ಆದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವುದೆಂದರೆ: ಕರ್ತದೇವರು ತಮ್ಮ ಪ್ರಜೆಯನ್ನು ಈಜಿಪ್ಟ್ ದೇಶದೊಳಗಿಂದ ರಕ್ಷಿಸಿದರೂ ತರುವಾಯ ಅವರೊಳಗೆ ನಂಬದೆ ಹೋದವರನ್ನು ಸಂಹಾರ ಮಾಡಿದರು.</verse>
				<verse number="6">ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ಅವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿಟ್ಟಿದ್ದಾರೆ.</verse>
				<verse number="7">ಸೊದೋಮ ಗೊಮೋರದವರೂ ಹಾಗೆಯೇ ಅವುಗಳ ಸುತ್ತಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಅನೈತಿಕತೆಗೆ ಒಪ್ಪಿಸಿಕೊಟ್ಟರು. ಅವರು ಸ್ವಭಾವಕ್ಕೆ ವಿರುದ್ಧ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲಾಗಿದ್ದಾರೆ.</verse>
				<verse number="8">ಹಾಗೆಯೇ ಈ ದುಃಸ್ವಪ್ನದವರೂ ಶರೀರವನ್ನು ಮಲಿನಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆಮಾಡುವವರೂ ದೇವದೂತರುಗಳನ್ನು ದೂಷಿಸುವವರೂ ಆಗಿದ್ದಾರೆ.</verse>
				<verse number="9">ಆದರೂ ಪ್ರಧಾನ ದೇವದೂತನಾದ ಮೀಕಾಯೇಲನು, ಮೋಶೆಯ ಶವದ ವಿಷಯದಲ್ಲಿ ಸೈತಾನನೊಂದಿಗೆ ವ್ಯಾಜ್ಯವಾಡಿ ವಾಗ್ವಾದ ಮಾಡಿದಾಗ, ಅವನು ಸೈತಾನನನ್ನು ದೂಷಿಸುವುದಕ್ಕೆ ಧೈರ್ಯಗೊಳ್ಳದೆ, “ಕರ್ತದೇವರು ನಿನ್ನನ್ನು ಗದರಿಸಲಿ!” ಎಂದನು.</verse>
				<verse number="10">ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ. ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.</verse>
				<verse number="11">ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವುದಕ್ಕಾಗಿ ಬಿಳಾಮನ ದೋಷವನ್ನು ಮಾಡುವುದಕ್ಕೆ ದುರಾಶೆಯಿಂದ ಓಡುವವರಾಗಿದ್ದಾರೆ. ಅವರು ಕೋರಹನಂತೆ ಎದುರು ಮಾತನಾಡಿ ನಾಶವಾಗುವವರಾಗಿದ್ದಾರೆ. ಆದ್ದರಿಂದ ಅವರ ಗತಿ ಏನೆಂದು ಹೇಳಲಿ!</verse>
				<verse number="12">ಕಳಂಕರಾದ ಇವರು ನಿಮ್ಮ ಪ್ರೇಮ ಭೋಜನಗಳಲ್ಲಿ ನಿರ್ಭಯವಾಗಿ ತಿಂದು, ತಮ್ಮನ್ನು ತಾವೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಚದುರಿ ಹೋಗುವ ನೀರಿಲ್ಲದ ಮೇಘಗಳೂ ಎರಡು ಸಾರಿ ಸತ್ತು, ಹಣ್ಣು ಬಿಡದೆ ಒಣಗಿ ಹೋಗಿ ಬೇರುಸಹಿತ ಕಿತ್ತು ಬಿದ್ದ ಮರಗಳೂ</verse>
				<verse number="13">ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲಕ್ಕೆ ಇಡಲಾಗಿದೆ.</verse>
				<verse number="14">ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ, “ಇಗೋ, ಕರ್ತದೇವರು ತಮ್ಮ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು</verse>
				<verse number="15">ಎಲ್ಲರಿಗೆ ನ್ಯಾಯತೀರಿಸುವುದಕ್ಕೆ ಬರುವರು. ಮಾತ್ರವಲ್ಲದೆ ಅವರಲ್ಲಿ ಭಕ್ತಿಹೀನರೆಲ್ಲರು ಮಾಡಿದ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರೋಧವಾಗಿ ಆಡಿದ ಎಲ್ಲಾ ದೂಷಣೆಗಳ ವಿಷಯವಾಗಿ ಅವರನ್ನು ಖಂಡಿಸಲು ಬರುವರು,” ಎಂಬುದಾಗಿ ಪ್ರವಾದಿಸಿದನು.</verse>
				<verse number="16">ಇವರು ಗೊಣಗುಟ್ಟುವವರೂ ದೂರುವವರೂ ತಮ್ಮ ದುರಾಶೆಗಳನ್ನು ಅನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಉದುರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.</verse>
				<verse number="17">ಪ್ರಿಯ ಸ್ನೇಹಿತರೇ, ನೀವಾದರೋ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಅಪೊಸ್ತಲರು ಮೊದಲು ಹೇಳಿದ ಮಾತುಗಳನ್ನು ಜ್ಞಾಪಕಮಾಡಿಕೊಳ್ಳಿರಿ.</verse>
				<verse number="18">“ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರು,” ಎಂದು ಅಪೊಸ್ತಲರು ನಿಮಗೆ ಹೇಳಿದರು.</verse>
				<verse number="19">ಇವರು ನಿಮ್ಮಲ್ಲಿ ಭಿನ್ನಾಭಿಪ್ರಾಯವನ್ನು ಉಂಟುಮಾಡುವವರೂ ಪ್ರಾಪಂಚಿಕ ಮನುಷ್ಯರೂ ಪವಿತ್ರಾತ್ಮ ದೇವರಿಲ್ಲದವರೂ ಆಗಿದ್ದಾರೆ.</verse>
				<verse number="20">ಪ್ರಿಯರೇ, ನೀವಾದರೋ ನಿಮಗಿರುವ ಅತಿಪರಿಶುದ್ಧವಾದ ನಂಬಿಕೆಯಲ್ಲಿ ನಿಮ್ಮನ್ನು ನಿರ್ಮಿಸಿಕೊಂಡವರಾಗಿ ಪರಿಶುದ್ಧಾತ್ಮ ದೇವರಲ್ಲಿ ಪ್ರಾರ್ಥಿಸಿರಿ.</verse>
				<verse number="21">ನಿತ್ಯಜೀವಕ್ಕಾಗಿ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕರುಣೆಗೋಸ್ಕರ ಎದುರುನೋಡುತ್ತಾ ನಿಮ್ಮನ್ನು ದೇವರ ಪ್ರೀತಿಯಲ್ಲಿ ಕಾಪಾಡಿಕೊಳ್ಳಿರಿ.</verse>
				<verse number="22">ಸಂಶಯಪಡುವ ಕೆಲವರಿಗೆ ಕನಿಕರವನ್ನು ತೋರಿಸಿರಿ.</verse>
				<verse number="23">ಬೇರೆಯವರನ್ನು ಬೆಂಕಿಯಿಂದ ಎಳೆದು ರಕ್ಷಿಸಿರಿ. ಭಯದಿಂದ ಕರುಣೆ ತೋರಿಸಿರಿ. ಪಾಪ ಕೃತ್ಯಗಳಿಂದ ಮೈಲಿಗೆಯಾದ ಅವರ ಜೀವನವನ್ನು ಸಹ ಹಗೆ ಮಾಡಿರಿ.</verse>
				<verse number="24">ಎಡವಿಬೀಳದಂತೆ ನಿಮ್ಮನ್ನು ಕಾಪಾಡುವುದಕ್ಕೂ ತಮ್ಮ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ಅತ್ಯಂತ ಹರ್ಷದೊಡನೆ ನಿರ್ದೋಷಿಗಳನ್ನಾಗಿ ನಿಲ್ಲಿಸುವುದಕ್ಕೂ ಶಕ್ತರಾಗಿರುವ</verse>
				<verse number="25">ನಮ್ಮ ರಕ್ಷಕರಾದ ಒಬ್ಬರೇ ದೇವರಿಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಬಲವು, ಅಧಿಕಾರಗಳು ಎಂದೂ ಇದ್ದಂತೆ ಈಗಲೂ ಯಾವಾಗಲೂ ಇರಲಿ. ಆಮೆನ್.</verse>
			</chapter>
		</book>
		<book number="66">
			<chapter number="1">
				<verse number="1">ಇದು ಕ್ರಿಸ್ತ ಯೇಸುವಿನ ಪ್ರಕಟನೆ. ಶೀಘ್ರವೇ ಸಂಭವಿಸಲಿಕ್ಕಿರುವ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದರು. ಇದಲ್ಲದೆ ದೇವರು ತಮ್ಮ ದೇವದೂತನನ್ನು ಕಳುಹಿಸಿ, ಅವನ ಮುಖಾಂತರ ಆ ಸಂಗತಿಗಳನ್ನು ತಮ್ಮ ದಾಸನಾದ ಯೋಹಾನನಿಗೆ ತಿಳಿಸಿದರು.</verse>
				<verse number="2">ಯೋಹಾನನು ತಾನು ಕಂಡ ಎಲ್ಲಾ ಸಂಗತಿಗಳನ್ನು ಅಂದರೆ ದೇವರ ವಾಕ್ಯದ ವಿಷಯವಾಗಿಯೂ ಕ್ರಿಸ್ತ ಯೇಸುವಿನ ವಿಷಯವಾಗಿಯೂ ತಿಳಿಸಿ ಸಾಕ್ಷಿಕೊಟ್ಟನು.</verse>
				<verse number="3">ಈ ಪ್ರವಾದನೆಯ ವಾಕ್ಯಗಳನ್ನು ಓದುವಂಥವರೂ ಕೇಳುವಂಥವರೂ ಈ ಪ್ರವಾದನೆಯ ವಾಕ್ಯಗಳಲ್ಲಿ ಬರೆದಿರುವ ಮಾತುಗಳನ್ನು ಕೈಕೊಂಡು ನಡೆಯುವಂಥವರೂ ಧನ್ಯರು. ಏಕೆಂದರೆ ಸಮಯವು ಸಮೀಪವಾಗಿದೆ.</verse>
				<verse number="4">ಯೋಹಾನನು, ಅಂದಿನ ಏಷ್ಯಾ ಪ್ರಾಂತದಲ್ಲಿರುವ ಏಳು ಸಭೆಗಳಿಗೆ ಬರೆಯುವುದೇನೆಂದರೆ, ಗತಕಾಲ, ವರ್ತಮಾನ, ಭವಿಷ್ಯತ್ ಕಾಲಗಳಲ್ಲಿರುವ ದೇವರಿಂದ ಮತ್ತು ತಮ್ಮ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ,</verse>
				<verse number="5">ನಂಬಿಗಸ್ತ ಸಾಕ್ಷಿಯೂ ಸತ್ತವರೊಳಗಿಂದ ಪ್ರಥಮವಾಗಿ ಜೀವಂತವಾಗಿ ಎದ್ದು ಬಂದವರೂ ಭೂರಾಜರಿಗೆ ಒಡೆಯರೂ ಆಗಿರುವ ಕ್ರಿಸ್ತ ಯೇಸುವಿನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅವರೇ ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವರೂ ಆಗಿದ್ದಾರೆ.</verse>
				<verse number="6">ನಮ್ಮನ್ನು ಒಂದು ರಾಜ್ಯವನ್ನಾಗಿಯೂ ತಮ್ಮ ತಂದೆಯಾದ ದೇವರಿಗೆ ಸೇವೆ ಸಲ್ಲಿಸುವ ಯಾಜಕರನ್ನಾಗಿಯೂ ಮಾಡಿರುವ ಕ್ರಿಸ್ತ ಯೇಸುವಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯು, ಬಲವು ಇರಲಿ ಆಮೆನ್.</verse>
				<verse number="7">“ಇಗೋ, ಯೇಸು ಮೇಘಗಳೊಂದಿಗೆ ಬರುತ್ತಾರೆ,” ಮತ್ತು “ಎಲ್ಲರ ಕಣ್ಣುಗಳು ಅವರನ್ನು ಕಾಣುವವು, ಅವರನ್ನು ಇರಿದವರು ಸಹ ಕಾಣುವರು.” ಭೂಲೋಕದಲ್ಲಿರುವ ಎಲ್ಲಾ ಜನರು, “ಅವರ ದೆಸೆಯಿಂದ ಗೋಳಾಡುವರು.” ಹೌದು, ಹಾಗೆಯೇ ಆಗುವುದು! ಆಮೆನ್.</verse>
				<verse number="8">“ನಾನೇ ಆದಿಯೂ ಅಂತ್ಯವೂ ಗತಕಾಲ, ವರ್ತಮಾನ, ಭವಿಷ್ಯತ್ಕಾಲಗಳಲ್ಲಿರುವವನೂ ಮತ್ತು ಸರ್ವಶಕ್ತನೂ ಆಗಿದ್ದೇನೆ,” ಎಂದು ಕರ್ತದೇವರು ಹೇಳುತ್ತಾರೆ.</verse>
				<verse number="9">ನಿಮ್ಮ ಸಹೋದರನೂ ಯೇಸುವಿನ ನಿಮಿತ್ತ ಆಗುವ ಬಾಧೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ಎಂಬ ದ್ವೀಪದಲ್ಲಿದ್ದೆನು.</verse>
				<verse number="10">ನಾನು ಕರ್ತ ಯೇಸುವಿನ ದಿನದಲ್ಲಿ ಆತ್ಮಭರಿತನಾಗಿರಲು ನನ್ನ ಹಿಂದೆ ತುತೂರಿಯ ಶಬ್ದದಂತಿರುವ ಮಹಾಧ್ವನಿಯನ್ನು ಕೇಳಿದೆನು.</verse>
				<verse number="11">ಅದು, “ಕಾಣುತ್ತಿರುವುದನ್ನು ಸುರುಳಿಯಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯದಲ್ಲಿರುವ ಏಳು ಸಭೆಗಳಿಗೆ ಕಳುಹಿಸಬೇಕು,” ಎಂದು ನುಡಿಯಿತು.</verse>
				<verse number="12">ನನ್ನೊಂದಿಗೆ ಮಾತನಾಡುತ್ತಿದ್ದ ಧ್ವನಿಯು ಯಾರದೆಂದು ನೋಡುವುದಕ್ಕೆ ಹಿಂದಕ್ಕೆ ತಿರುಗಿದೆನು. ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ</verse>
				<verse number="13">ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಪುತ್ರ ಇವರ ಹಾಗೆ ಒಬ್ಬ ವ್ಯಕ್ತಿ ಇರುವವರನ್ನೂ ಕಂಡೆನು. ಅವರು ಪಾದದವರೆಗೆ ಮುಚ್ಚುವ ನಿಲುವಂಗಿಯನ್ನು ತೊಟ್ಟು, ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದರು.</verse>
				<verse number="14">ಅವರ ತಲೆ ಕೂದಲುಗಳು ಬಿಳಿಯ ಉಣ್ಣೆಯಂತೆಯೂ ಹಿಮದಂತೆಯೂ ಬೆಳ್ಳಗಿದ್ದವು. ಅವರ ನೇತ್ರಗಳು ಬೆಂಕಿಯ ಜ್ವಾಲೆಯಂತೆಯೂ</verse>
				<verse number="15">ಅವರ ಪಾದಗಳು ಕುಲುಮೆಯಲ್ಲಿ ಹೊಳೆಯುವ ತಾಮ್ರದಂತೆಯೂ ಅವರ ಧ್ವನಿಯು ಜಲಪ್ರವಾಹದ ಘೋಷದಂತೆಯೂ ಇದ್ದವು.</verse>
				<verse number="16">ಅವರು ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿದ್ದರು. ಅವರ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಅವರ ಮುಖವು ಸೂರ್ಯನ ತೇಜಸ್ಸಿನಂತೆ ಪ್ರಕಾಶಿಸುವಂತಿತ್ತು.</verse>
				<verse number="17">ನಾನು ಅವರನ್ನು ಕಂಡಾಗ ಸತ್ತವನ ಹಾಗೆ ಅವರ ಪಾದಗಳ ಮೇಲೆ ಬಿದ್ದೆನು. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನು ಮೊದಲನೆಯವನೂ ಕಡೆಯವನೂ</verse>
				<verse number="18">ಸದಾ ಜೀವಿಸುವವನೂ ಆಗಿದ್ದೇನೆ. ಮರಣ ಹೊಂದಿದ್ದೆನು, ಇಗೋ, ಯುಗಯುಗಾಂತರಗಳಲ್ಲಿಯೂ ನಾನು ಬದುಕುವವನಾಗಿದ್ದೇನೆ. ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನ ಬಳಿ ಇವೆ.</verse>
				<verse number="19">“ಆದ್ದರಿಂದ ನೀನು ಕಂಡದ್ದವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಸಂಭವಿಸುವವುಗಳನ್ನೂ ಬರೆ.</verse>
				<verse number="20">ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯ ಏನೆಂದರೆ: ಆ ಏಳು ನಕ್ಷತ್ರಗಳು, ಆ ಏಳು ಸಭೆಗಳ ಸಂದೇಶಕರು, ಆ ಏಳು ದೀಪಸ್ತಂಭಗಳು, ಆ ಏಳು ಸಭೆಗಳಾಗಿರುತ್ತವೆ.</verse>
			</chapter>
			<chapter number="2">
				<verse number="1">“ನೀನು ಎಫೆಸದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು, ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವವರು ಹೇಳುವುದೇನೆಂದರೆ:</verse>
				<verse number="2">ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ಪ್ರಯಾಸ, ಸಹನೆಯನ್ನು ಬಲ್ಲೆನು. ನೀನು ದುಷ್ಟರನ್ನು ಸಹಿಸಲಾರೆ. ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.</verse>
				<verse number="3">ನೀನು ತಾಳ್ಮೆಯಿಂದ ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡು ಬೇಸರಗೊಳ್ಳಲಿಲ್ಲ.</verse>
				<verse number="4">ಆದರೂ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ ಎಂದು ನಿನ್ನ ವಿರುದ್ಧವಾಗಿ ಹೇಳುತ್ತೇನೆ.</verse>
				<verse number="5">ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ, ಅದನ್ನು ಜ್ಞಾಪಿಸಿಕೊಂಡು ಪಶ್ಚಾತ್ತಾಪಪಡು. ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನಿನ್ನ ಮನಸ್ಸು ಪರಿವರ್ತನೆ ಹೊಂದದಿದ್ದರೆ, ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು.</verse>
				<verse number="6">ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು. ಅದೇನೆಂದರೆ ನಾನು ಹಗೆ ಮಾಡುವ ನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ಹಗೆ ಮಾಡುತ್ತೀ.</verse>
				<verse number="7">ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು, ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ದೇವರ ಪರಲೋಕದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನಲು ಕೊಡುವೆನು.</verse>
				<verse number="8">“ಸ್ಮುರ್ನದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಮೊದಲನೆಯವರೂ ಕೊನೆಯವರೂ ಮರಣಹೊಂದಿ, ಜೀವಂತವಾಗಿ ಎದ್ದು ಬಂದವರು ಹೇಳುವುದೇನೆಂದರೆ:</verse>
				<verse number="9">ನಾನು ನಿನ್ನ ಸಂಕಟವನ್ನೂ ನಿನ್ನ ದಾರಿದ್ರ್ಯವನ್ನೂ ಬಲ್ಲೆನು. ಆದರೂ ನೀನು ಸಿರಿವಂತನೇ! ಮಾತ್ರವಲ್ಲದೇ ಅವರು ಯೆಹೂದ್ಯರಲ್ಲದಿದ್ದರೂ ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನೂ ಬಲ್ಲೆನು. ಅವರು ಸೈತಾನನ ಸಭಾಮಂದಿರದವರಾಗಿದ್ದಾರೆ.</verse>
				<verse number="10">ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.</verse>
				<verse number="11">ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.</verse>
				<verse number="12">“ಪೆರ್ಗಮದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಹರಿತವಾದ ಇಬ್ಬಾಯಿಕತ್ತಿಯನ್ನು ಹಿಡಿದವರು ಹೇಳುವುದೇನೆಂದರೆ:</verse>
				<verse number="13">ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು, ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ. ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನನ್ನು ಕೊಲ್ಲಲಾದ ದಿನಗಳಲ್ಲಿಯೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಅಲ್ಲಗಳೆಯಲಿಲ್ಲ.</verse>
				<verse number="14">ಆದರೂ ನಿನಗೆ ವಿರೋಧವಾಗಿ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ವ್ಯಭಿಚಾರ ಮಾಡುವುದರಲ್ಲಿಯೂ ಇಸ್ರಾಯೇಲರು ಮುಗ್ಗರಿಸಿ ಬೀಳುವಂತೆ ಬಿಳಾಮನು ಬಾಲಾಕನಿಗೆ ಕಲಿಸಿದ ಬೋಧನೆಯನ್ನು ಹಿಡಿದುಕೊಂಡಿರುವವರು ನಿನ್ನಲ್ಲಿದ್ದಾರೆ.</verse>
				<verse number="15">ಹಾಗೆಯೇ, ನಿಕೊಲಾಯಿತರ ಬೋಧನೆಯನ್ನು ಹಿಡಿದುಕೊಂಡಿರುವವರೂ ನಿನ್ನಲ್ಲಿದ್ದಾರೆ.</verse>
				<verse number="16">ಆದ್ದರಿಂದ ನೀನು ದೇವರ ಕಡೆಗೆ ತಿರುಗಿಕೋ! ಇಲ್ಲದಿದ್ದರೆ ನಾನು ಶೀಘ್ರವೇ ನಿನ್ನ ಬಳಿಗೆ ಬಂದು ನನ್ನ ಇಬ್ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧಮಾಡುವೆನು.</verse>
				<verse number="17">ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ಬಚ್ಚಿಟ್ಟಿರುವ ಮನ್ನಾವನ್ನು ಕೊಡುವೆನು. ಇದಲ್ಲದೆ ಅವರಿಗೆ ಬಿಳಿಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು, ಅದು ಮತ್ತಾರಿಗೂ ತಿಳಿಯದು.</verse>
				<verse number="18">“ಥುವತೈರದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಪುತ್ರ ಆಗಿರುವವರು ಹೇಳುವುದೇನೆಂದರೆ:</verse>
				<verse number="19">ನಾನು ನಿನ್ನ ಕ್ರಿಯೆಗಳನ್ನೂ ನಿನ್ನ ಪ್ರೀತಿಯನ್ನೂ ನಂಬಿಕೆಯನ್ನೂ ಸೇವೆಯನ್ನೂ ಮತ್ತು ತಾಳ್ಮೆಯನ್ನೂ ಬಲ್ಲೆನು. ನೀನು ಮೊದಲು ಮಾಡಿದ್ದಕ್ಕಿಂತಲೂ ಈಗ ಹೆಚ್ಚಾಗಿ ಮಾಡುತ್ತಿರುವೆ.</verse>
				<verse number="20">ಆದರೆ ನಿನ್ನ ಮೇಲೆ ಒಂದು ತಪ್ಪು ಹೊರಿಸಬೇಕಾಗುತ್ತದೆ. ಅದೇನೆಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ವ್ಯಭಿಚಾರ ಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವುದು.</verse>
				<verse number="21">ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು. ಆದರೆ ದೇವರ ಕಡೆಗೆ ತಿರುಗಿಕೊಂಡು ತನ್ನ ವ್ಯಭಿಚಾರವನ್ನು ಬಿಟ್ಟುಬಿಡಲು ಅವಳಿಗೆ ಮನಸ್ಸಿಲ್ಲ.</verse>
				<verse number="22">ಇಗೋ, ಅವಳು ಹಾಸಿಗೆಯಲ್ಲಿ ಬಾಧೆಯಿಂದ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರ ಮಾಡುವವರು ತಮ್ಮ ಹೃದಯದಲ್ಲೂ ಮನಸ್ಸಿನಲ್ಲೂ ಪಶ್ಚಾತ್ತಾಪಪಟ್ಟು ತಮ್ಮ ಕೃತ್ಯಗಳನ್ನು ಬಿಟ್ಟುಬಿಡದೆ ಹೋದರೆ, ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.</verse>
				<verse number="23">ಅವಳ ಮಕ್ಕಳನ್ನು ಮರಣಕ್ಕೆ ಒಪ್ಪಿಸುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ತಿಳಿದುಬರುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.</verse>
				<verse number="24">ಥುವತೈರದಲ್ಲಿರುವ ಉಳಿದವರಿಗೆ ನಾನು ಹೇಳುವುದೇನಂದರೆ: ಅವಳ ಬೋಧನೆಯನ್ನು ನೀವು ಅವಲಂಬಿಸಲಿಲ್ಲ. ಸೈತಾನನ ಆಳವಾದ ರಹಸ್ಯ ಬೋಧನೆಗಳು ಎಂದು ಹೇಳುವ ಬೋಧನೆಯನ್ನು ನೀವು ಅವಲಂಬಿಸಲಿಲ್ಲ.</verse>
				<verse number="25">ನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಬೇಕೆಂಬ ಅಪ್ಪಣೆಯನ್ನೇ ಹೊರತು ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲವೆಂಬುದೇ.</verse>
				<verse number="26">ಯಾರು ಜಯಶಾಲಿಯಾಗಿದ್ದು, ನನ್ನ ಚಿತ್ತವನ್ನು ಅಂತ್ಯದವರೆಗೂ ಯಾರು ನಡೆಸುತ್ತಾರೋ, ಅವರಿಗೆ ನಾನು ರಾಷ್ಟ್ರಗಳ ಮೇಲೆ ಅಧಿಕಾರವನ್ನು ನೀಡುವೆನು.</verse>
				<verse number="27">ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ, ‘ಅವರು ಕಬ್ಬಿಣದ ಕೋಲಿನಿಂದ ರಾಷ್ಟ್ರಗಳನ್ನು ಆಳುವರು. ಮಣ್ಣಿನ ಮಡಿಕೆಗಳು ಒಡೆಯುವಂತೆ ಬಲ ಮುರಿದು ಹೋಗುವುದು.’</verse>
				<verse number="28">ನಾನು ಅಂಥವರಿಗೆ ಉದಯಸೂಚಕ ತಾರೆಯನ್ನು ಅವರಿಗೆ ಕೊಡುವೆನು.</verse>
				<verse number="29">ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕೇಳಲು ಇಷ್ಟ ಉಳ್ಳವರು ಕೇಳಲಿ.</verse>
			</chapter>
			<chapter number="3">
				<verse number="1">“ಸಾರ್ದಿಸಿನಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ದೇವರ ಏಳು ಆತ್ಮಗಳನ್ನೂ ಏಳು ನಕ್ಷತ್ರಗಳನ್ನೂ ಹಿಡಿದುಕೊಂಡಿರುವವರು ಹೇಳುವುದೇನೆಂದರೆ: ನಾನು ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ಸತ್ತವನಾಗಿದ್ದೀಯೆ.</verse>
				<verse number="2">ಎಚ್ಚರವಾಗು, ಸಾಯುವ ಹಾಗಿರುವ ಉಳಿದವುಗಳನ್ನು ಬಲಪಡಿಸು. ಏಕೆಂದರೆ ನನ್ನ ದೇವರ ಮುಂದೆ ನಿನ್ನ ಕೃತ್ಯಗಳು ನನಗೆ ಪರಿಪೂರ್ಣವಾಗಿ ಕಂಡುಬರಲಿಲ್ಲ.</verse>
				<verse number="3">ಆದ್ದರಿಂದ ನೀನು ಹೊಂದಿದ ಉಪದೇಶವನ್ನೂ ಕೇಳಿದ ರೀತಿಯನ್ನೂ ಜ್ಞಾಪಿಸಿಕೊಂಡು, ಅದನ್ನು ಕೈಕೊಳ್ಳುವವನಾಗಿ ಪಶ್ಚಾತ್ತಾಪಪಡು, ನೀನು ಎಚ್ಚರವಾಗಿರದಿದ್ದರೆ, ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಎಂದು ನಿನಗೆ ಯಾವ ರೀತಿಯಲ್ಲಿಯೂ ತಿಳಿಯದು.</verse>
				<verse number="4">ಆದರೂ ತಮ್ಮ ವಸ್ತ್ರಗಳನ್ನು ಮೈಲಿಗೆ ಮಾಡಿಕೊಳ್ಳದಿರುವ ಕೆಲವು ಜನರು ಸಾರ್ದಿಸಿ ಪಟ್ಟಣದಲ್ಲಿ ಇದ್ದಾರೆ, ಅವರು ಯೋಗ್ಯರಾಗಿರುವುದರಿಂದ ಬಿಳಿವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.</verse>
				<verse number="5">ಜಯಹೊಂದುವವರಿಗೆ ಹೀಗೆ ಬಿಳಿಯ ವಸ್ತ್ರಗಳನ್ನು ಹೊದಿಸಲಾಗುವುದು. ಅವರ ಹೆಸರನ್ನು ಜೀವಬಾಧ್ಯರ ಪಟ್ಟಿಯಿಂದ ನಾನು ಅಳಿಸಿಬಿಡದೆ, ಅವರ ಹೆಸರನ್ನು ನನ್ನ ತಂದೆಯ ಮುಂದೆಯೂ ಅವರ ದೂತರ ಮುಂದೆಯೂ ಅರಿಕೆ ಮಾಡುವೆನು.</verse>
				<verse number="6">ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ.</verse>
				<verse number="7">“ಫಿಲದೆಲ್ಫಿಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಪರಿಶುದ್ಧರೂ ಸತ್ಯವಂತರೂ ದಾವೀದನ ಬೀಗದ ಕೈಯುಳ್ಳವರೂ ಯಾರೂ ಮುಚ್ಚದಂತೆ ತೆರೆಯುವವರೂ ಯಾರೂ ತೆರೆಯದಂತೆ ಮುಚ್ಚುವವರೂ ಆಗಿರುವವರು ಹೇಳುವುದೇನೆಂದರೆ:</verse>
				<verse number="8">ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ನಿನ್ನ ಶಕ್ತಿಯು ಸ್ವಲ್ಪವೇ ಆಗಿದ್ದರೂ ನೀನು ನನ್ನ ಹೆಸರನ್ನು ನಿರಾಕರಿಸದೆ, ನನ್ನ ವಾಕ್ಯವನ್ನು ಕಾಪಾಡಿಕೊಂಡಿದ್ದರಿಂದ, ನಿನ್ನೆದುರಿನಲ್ಲಿ ಒಂದು ದ್ವಾರವನ್ನು ತೆರೆದಿಟ್ಟಿದ್ದೇನೆ, ಅದನ್ನು ಯಾರೂ ಮುಚ್ಚಲಾರರು.</verse>
				<verse number="9">ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದಿಂದ ಕೆಲವರು ಬಂದು ನಿನ್ನ ಪಾದಕ್ಕೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳಿಯುವಂತೆಯೂ ಮಾಡುವೆನು.</verse>
				<verse number="10">ನೀನು ನನ್ನ ವಾಕ್ಯವನ್ನು ಸಹನೆಯಿಂದ ಕಾಪಾಡಿಕೊಂಡಿದ್ದರಿಂದ, ಭೂನಿವಾಸಿಗಳನ್ನು ಪರೀಕ್ಷಿಸಲು ಇಡೀ ಲೋಕದಲ್ಲೆಲ್ಲಾ ಬರಲಿರುವ ಶೋಧನೆಯ ಸಮಯದಲ್ಲಿ ನಾನು ಸಹ ನಿನ್ನನ್ನು ಸುರಕ್ಷಿತವಾಗಿಡುವೆನು.</verse>
				<verse number="11">ನಾನು ಬೇಗ ಬರುತ್ತೇನೆ. ನಿನ್ನ ಕಿರೀಟವನ್ನು ಯಾರೂ ಅಪಹರಿಸದಂತೆ ನಿನಗಿರುವುದನ್ನು ಹಿಡಿದುಕೊಂಡಿರು.</verse>
				<verse number="12">ಯಾರು ಜಯ ಹೊಂದುತ್ತಾರೋ, ಅವರನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಸ್ಥಾಪಿಸುವೆನು. ಅವರು ಎಂದಿಗೂ ಅದರೊಳಗಿಂದ ಹೊರಗೆ ಹೋಗುವುದಿಲ್ಲ. ನಾನು ನನ್ನ ದೇವರ ಹೆಸರನ್ನು ಪರಲೋಕದಲ್ಲಿರುವ ನನ್ನ ದೇವರಿಂದ ಇಳಿದು ಬರುವ ಹೊಸ ಯೆರೂಸಲೇಮಿನ ಹೆಸರನ್ನೂ ಹಾಗೂ ನನ್ನ ಹೊಸ ಹೆಸರನ್ನೂ ಅವರ ಮೇಲೆ ಬರೆಯುವೆನು.</verse>
				<verse number="13">ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ.</verse>
				<verse number="14">“ಲವೊದಿಕೀಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಆಮೆನ್ ಎಂಬವರೂ ನಂಬಿಗಸ್ತರೂ ಸತ್ಯಸಾಕ್ಷಿಯೂ ದೇವರಿಂದಾದ ಸೃಷ್ಟಿಗೆ ಒಡೆಯರೂ ಆಗಿರುವವರು ಹೇಳುವುದೇನೆಂದರೆ:</verse>
				<verse number="15">ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ನೀನು ತಣ್ಣಗೂ ಇಲ್ಲ, ಬಿಸಿಯೂ ಇಲ್ಲ, ನೀನು ತಣ್ಣಗಾಗಲಿ, ಬಿಸಿಯಾಗಲಿ ಇದ್ದಿದ್ದರೆ ಚೆನ್ನಾಗಿತ್ತು.</verse>
				<verse number="16">ನೀನು ಬಿಸಿಯಾಗಲೀ, ತಣ್ಣಗಾಗಲೀ ಇಲ್ಲದೆ ಉಗುರುಬೆಚ್ಚಗಿರುವುದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಕಾರಿ ಬಿಡುವೆನು.</verse>
				<verse number="17">ಏಕೆಂದರೆ ನೀನು ನಿನ್ನ ವಿಷಯದಲ್ಲಿ, ‘ನಾನು ಐಶ್ವರ್ಯವಂತನು, ನಾನು ಸಂಪಾದಕನಾಗಿದ್ದೇನೆ ಮತ್ತು ಕೊರತೆ ನನಗಿಲ್ಲ,’ ಎಂದು ಹೇಳಿಕೊಳ್ಳುತ್ತಿ. ಆದರೆ ನೀನು ಕೇವಲ ದುರವಸ್ಥೆಯುಳ್ಳವನು, ದೌರ್ಭಾಗ್ಯನು, ದರಿದ್ರನು, ಕುರುಡನು, ಬೆತ್ತಲೆಯಾದವನು ಎಂಬುದನ್ನು ತಿಳಿಯದೆ ಇದ್ದೀ.</verse>
				<verse number="18">ನೀನು ಸಿರಿವಂತನಾಗುವಂತೆ ಬೆಂಕಿಯಲ್ಲಿ ಪುಟಕ್ಕೆ ಹಾಕಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳಿ ವಸ್ತ್ರಗಳನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಮುಲಾಮನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.</verse>
				<verse number="19">ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.</verse>
				<verse number="20">ಇಗೋ, ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾರಾದರೂ ನನ್ನ ಸ್ವರವನ್ನು ಕೇಳಿ, ಬಾಗಿಲನ್ನು ತೆರೆದರೆ, ನಾನು ಪ್ರವೇಶ ಮಾಡಿ, ಆ ವ್ಯಕ್ತಿಯ ಸಂಗಡ ಊಟಮಾಡುವೆನು. ಅವರೂ ನನ್ನ ಸಂಗಡ ಊಟಮಾಡುವರು.</verse>
				<verse number="21">ನಾನು ಜಯಹೊಂದಿ, ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆ, ಜಯಶಾಲಿಯಾದವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.</verse>
				<verse number="22">ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ.”</verse>
			</chapter>
			<chapter number="4">
				<verse number="1">ಇವುಗಳಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿದ್ದ ಒಂದು ದ್ವಾರವು ಕಾಣಿಸಿತು. ನನ್ನೊಂದಿಗೆ ತುತೂರಿಯ ಧ್ವನಿಯಂತೆ ಮಾತನಾಡಿದ, ನಾನು ಮೊದಲು ಕೇಳಿದ ಧ್ವನಿಯಿಂದ, “ಬಾ, ಮುಂದೆ ಸಂಭವಿಸಲಿಕ್ಕೆ ಇರುವವುಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.</verse>
				<verse number="2">ಕೂಡಲೇ ನಾನು ಆತ್ಮವಶನಾದೆನು. ಆಗ ನನ್ನೆದುರಿನಲ್ಲಿ ಪರಲೋಕದಲ್ಲಿ ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬರು ಕುಳಿತಿದ್ದರು.</verse>
				<verse number="3">ಆಸೀನರಾದವರು ಸೂರ್ಯಕಾಂತ, ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದರು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆಬಿಲ್ಲು ಹೊಳೆಯುತ್ತಿತ್ತು.</verse>
				<verse number="4">ಇದಲ್ಲದೆ ಸಿಂಹಾಸನದ ಸುತ್ತ ಇತರ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಬಿಳಿವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಬಂಗಾರದ ಕಿರೀಟಗಳಿದ್ದವು.</verse>
				<verse number="5">ಸಿಂಹಾಸನದೊಳಗಿಂದ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಹರಡಿದವು. ಸಿಂಹಾಸನದ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಬೆಳಗುತ್ತಿದ್ದವು.</verse>
				<verse number="6">ಇದಲ್ಲದೆ ಸಿಂಹಾಸನದ ಮುಂದೆ ಸ್ಪಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ, ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.</verse>
				<verse number="7">ಮೊದಲನೆಯ ಜೀವಿಯು ಸಿಂಹದಂತಿತ್ತು, ಎರಡನೆಯ ಜೀವಿಯು ಹೋರಿಯಂತಿತ್ತು, ಮೂರನೆಯದು ಮನುಷ್ಯನಂತಿತ್ತು, ನಾಲ್ಕನೆಯದು ಹಾರುವ ಹದ್ದಿನಂತಿತ್ತು.</verse>
				<verse number="8">ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಆ ಜೀವಿಗಳ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ ಹೀಗೆ ಹೇಳುತ್ತಿದ್ದವು: “ ‘ದೇವರು ಆಗಿರುವ ಕರ್ತ ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು, ಅವರು ಸರ್ವಶಕ್ತರು,’ ಗತಕಾಲ, ವರ್ತಮಾನ ಭವಿಷ್ಯತ್ಕಾಲಗಳಲ್ಲಿ ಇರುವವರು.”</verse>
				<verse number="9">ಯುಗಯುಗಾಂತರಗಳಲ್ಲಿಯೂ ಜೀವಿಸುವವರಾಗಿ, ಸಿಂಹಾಸನದ ಮೇಲೆ ಆಸೀನರಾದವರಿಗೆ ಆ ನಾಲ್ಕು ಜೀವಿಗಳು ಮಹಿಮೆ, ಮಾನ, ಕೃತಜ್ಞತಾ ಸ್ತುತಿಗಳನ್ನು ಸಲ್ಲಿಸುವಾಗ,</verse>
				<verse number="10">ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಆಸೀನರಾದವರ ಎದುರಿಗೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ,</verse>
				<verse number="11">“ನಮ್ಮ ಕರ್ತ ಆಗಿರುವ ದೇವರೇ, ನೀವು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ಸಮಸ್ತವನ್ನು ಸೃಷ್ಟಿಸಿದವರು ನೀವೇ. ಎಲ್ಲವೂ ನಿಮ್ಮ ಚಿತ್ತದಿಂದಲೇ ನಿರ್ಮಿತವಾದವು, ನಿಮ್ಮ ಚಿತ್ತದಿಂದಲೇ ಇದ್ದವು,” ಎಂದು ಹೇಳುತ್ತಾ, ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಿದ್ದರು.</verse>
			</chapter>
			<chapter number="5">
				<verse number="1">ಸಿಂಹಾಸನದ ಮೇಲೆ ಕುಳಿತಿದ್ದವರ ಬಲಗೈಯಲ್ಲಿ ಒಂದು ಚರ್ಮದ ಸುರುಳಿಯನ್ನು ಕಂಡೆನು. ಅದರ ಒಳಗೂ ಹಿಂಭಾಗದಲ್ಲಿಯೂ ಬರೆಯಲಾಗಿತ್ತು. ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.</verse>
				<verse number="2">ಇದಲ್ಲದೆ ಬಲಿಷ್ಠನಾದ ಒಬ್ಬ ದೇವದೂತನು, “ಈ ಸುರುಳಿಯ ಮುದ್ರೆಗಳನ್ನು ಬರೆಯುವುದಕ್ಕೂ ಅದನ್ನು ಬಿಚ್ಚುವುದಕ್ಕೂ ಯಾವನು ಯೋಗ್ಯನು?” ಎಂದು ಮಹಾಧ್ವನಿಯಿಂದ ಕೂಗುವುದನ್ನು ಕಂಡೆನು.</verse>
				<verse number="3">ಆದರೆ ಆ ಸುರುಳಿಯನ್ನು ಬಿಚ್ಚಲು ಇಲ್ಲವೆ ಅದರಲ್ಲಿ ನೋಡಲು ಪರಲೋಕದಲ್ಲಿಯಾಗಲಿ, ಭೂಮಿಯಲ್ಲಿಯಾಗಲಿ, ಭೂಮಿಯ ಕೆಳಗಾಗಲಿ ಯಾವ ವ್ಯಕ್ತಿಗೂ ಆಗಲಿಲ್ಲ.</verse>
				<verse number="4">ಆಗ ಸುರುಳಿಯನ್ನು ಬಿಚ್ಚುವುದಕ್ಕಾಗಲಿ, ಅದರಲ್ಲಿ ನೋಡುವುದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವಾದ ಕಾರಣ ನಾನು ಬಹಳವಾಗಿ ಅತ್ತೆನು.</verse>
				<verse number="5">ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜರೂ ಆಗಿರುವವರು ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನು ಬಿಚ್ಚುವುದಕ್ಕೆ ಜಯವೀರರಾಗಿದ್ದಾರೆ,” ಎಂದು ಹೇಳಿದನು.</verse>
				<verse number="6">ಆಗ ನಾನು, ಸಿಂಹಾಸನದ ಮಧ್ಯದಲ್ಲಿಯೂ ನಾಲ್ಕು ಜೀವಿಗಳು ಮತ್ತು ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ಬಲಿಗೋಸ್ಕರ ವಧೆಯಾಗಿದ್ದಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಭೂಮಿಯ ಮೇಲೆಲ್ಲಾ ಕಳುಹಿಸಲಾದ ದೇವರ ಏಳು ಆತ್ಮಗಳು.</verse>
				<verse number="7">ಆ ಕುರಿಮರಿ ಆಗಿರುವವರು ಬಂದು ಸಿಂಹಾಸನದ ಮೇಲೆ ಕುಳಿತಿದ್ದವರ ಬಲಗೈಯೊಳಗಿಂದ ಸುರುಳಿಯನ್ನು ತೆಗೆದುಕೊಂಡರು.</verse>
				<verse number="8">ಸುರುಳಿಯನ್ನು ತೆಗೆದುಕೊಂಡಾಗ, ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿ ಆಗಿರುವವರ ಮುಂದೆ ಅಡ್ಡಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.</verse>
				<verse number="9">ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.</verse>
				<verse number="10">ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿರಿ, ಅವರು ಭೂಮಿಯ ಮೇಲೆ ಆಳುವರು!” ಎಂದು ಹೇಳಿದರು.</verse>
				<verse number="11">ಇದಲ್ಲದೆ ನಾನು ನೋಡಲಾಗಿ, ಸಿಂಹಾಸನದ ಜೀವಿಗಳ ಹಾಗೂ ಹಿರಿಯರ ಸುತ್ತಲೂ ಬಹುಮಂದಿ ದೇವದೂತರ ಧ್ವನಿಯನ್ನು ಕೇಳಿದೆನು. ಅವರ ಸಂಖ್ಯೆಯು ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.</verse>
				<verse number="12">ಅವರು, ಮಹಾಧ್ವನಿಯಿಂದ: “ವಧಿತರಾದ ಕುರಿಮರಿ ಆಗಿರುವವರು ಶಕ್ತಿ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಗೌರವ, ಮಹಿಮೆ, ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯರು!” ಎಂದು ಹೇಳಿದರು.</verse>
				<verse number="13">ಇದಲ್ಲದೆ ಆಕಾಶದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗಡೆಯೂ ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಹೀಗೆ ಹೇಳುವುದನ್ನು ಕೇಳಿದೆನು: “ಸಿಂಹಾಸನದ ಮೇಲೆ ಕುಳಿತಿರುವವರಿಗೂ ಕುರಿಮರಿ ಆಗಿರುವವರಿಗೂ ಸ್ತೋತ್ರ, ಗೌರವ, ಮಹಿಮೆ, ಶಕ್ತಿ, ಯುಗಯುಗಾಂತರಗಳಲ್ಲಿಯೂ ಇರಲಿ!”</verse>
				<verse number="14">ಆಗ ನಾಲ್ಕು ಜೀವಿಗಳು, “ಆಮೆನ್,” ಎಂದವು. ಹಿರಿಯರು ಅಡ್ಡಬಿದ್ದು ಆರಾಧಿಸಿದರು.</verse>
			</chapter>
			<chapter number="6">
				<verse number="1">ಏಳು ಮುದ್ರೆಗಳಲ್ಲಿ ಒಂದನ್ನು ಯಜ್ಞದ ಕುರಿಮರಿ ಆಗಿರುವವರು ತೆರೆಯುವುದನ್ನು ನಾನು ಕಂಡೆನು. ಆ ಜೀವಿಗಳಲ್ಲೊಂದು ಗುಡುಗಿನಂತಿದ್ದ ಶಬ್ದದಲ್ಲಿ, “ಬಾ!” ಎಂದು ಹೇಳುವುದನ್ನು ಕೇಳಿದೆನು.</verse>
				<verse number="2">ನಾನು ನೋಡಲು, ಇಗೋ ಒಂದು ಬಿಳಿ ಕುದುರೆ ಕಾಣಿಸಿತು. ಅದರ ಸವಾರಿ ಮಾಡುವವನು ಒಂದು ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು ಕಿರೀಟವು ಕೊಡಲಾಗಿತ್ತು. ಅವನು ಜಯಿಸುವವನಾಗಿ ಜಯಿಸುವುದಕ್ಕೊಸ್ಕರ ಹೊರಟನು.</verse>
				<verse number="3">ಕುರಿಮರಿ ಆಗಿರುವವರು ಎರಡನೆಯ ಮುದ್ರೆಯನ್ನು ತೆರೆದಾಗ, ಎರಡನೆಯ ಜೀವಿಯು, “ಬಾ” ಎಂದು ಹೇಳುವುದನ್ನು ಕೇಳಿದೆನು.</verse>
				<verse number="4">ಆಗ ಕೆಂಪು ಬಣ್ಣದ ಬೇರೊಂದು ಕುದುರೆಯು ಹೊರಟು ಬಂದಿತು. ಅದರ ಸವಾರನಿಗೆ ಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವುದಕ್ಕೂ ಅಧಿಕಾರವು ಕೊಡಲಾಗಿತ್ತು. ಅವನಿಗೆ ದೊಡ್ಡ ಕತ್ತಿಯು ಸಹ ಕೊಡಲಾಗಿತ್ತು.</verse>
				<verse number="5">ಕುರಿಮರಿ ಆಗಿರುವವರು ಮೂರನೆಯ ಮುದ್ರೆಯನ್ನು ತೆರೆದಾಗ, ಮೂರನೆಯ ಜೀವಿಯು, “ಬಾ” ಎಂದು ಹೇಳುವುದನ್ನು ಕೇಳಿದೆನು. ನಾನು ನೋಡಲು, ಕಪ್ಪಾದ ಒಂದು ಕುದುರೆಯನ್ನು ಕಂಡೆನು. ಅದರ ಸವಾರನು ತನ್ನ ಕೈಯಲ್ಲಿ ಒಂದು ತಕ್ಕಡಿಯನ್ನು ಹಿಡಿದಿದ್ದನು.</verse>
				<verse number="6">ಆಗ ನಾನು ನಾಲ್ಕು ಜೀವಿಗಳ ಮಧ್ಯದಿಂದ ಬಂದಂತೆ ಒಂದು ಧ್ವನಿಯನ್ನು ಕೇಳಿದೆನು. ಅದು, “ದಿನದ ಕೂಲಿಗೆ ಒಂದು ಕಿಲೋಗ್ರಾಂ ಗೋಧಿ, ಮೂರು ಕಿಲೋಗ್ರಾಂ ಜವೆಗೋಧಿ, ಆದರೆ ಎಣ್ಣೆಯನ್ನಾಗಲಿ, ದ್ರಾಕ್ಷಾರಸವನ್ನಾಗಲಿ ಕೆಡಿಸಬೇಡ,” ಎಂದಿತು.</verse>
				<verse number="7">ಕುರಿಮರಿ ಆಗಿರುವವರು ನಾಲ್ಕನೆಯ ಮುದ್ರೆಯನ್ನು ಒಡೆದಾಗ, ನಾಲ್ಕನೆಯ ಜೀವಿಯು, “ಬಾ” ಎಂದು ಕರೆಯುವ ಧ್ವನಿಯನ್ನು ಕೇಳಿದೆನು.</verse>
				<verse number="8">ನಾನು ನೋಡಲು, ಒಂದು ನಸು ಹಸಿರು ಬಣ್ಣದ ಕುದುರೆ ಕಾಣಿಸಿತು. ಅದರ ಸವಾರನಿಗೆ ಮೃತ್ಯುವೆಂದು ಹೆಸರಿತ್ತು. ಪಾತಾಳವೆಂಬವನು ಅವನ ಹಿಂದೆ ಹೋಗುತ್ತಿದ್ದನು. ಅವರಿಗೆ ಭೂಮಿಯ ನಾಲ್ಕನೆಯ ಒಂದು ಭಾಗದ ಮೇಲೆ ಕತ್ತಿ, ಕ್ಷಾಮ, ಮರಣ ಮತ್ತು ಭೂಮಿಯ ಕ್ರೂರಮೃಗಗಳಿಂದ ಕೊಲ್ಲುವ ಅಧಿಕಾರಕೊಡಲಾಗಿತ್ತು.</verse>
				<verse number="9">ಕುರಿಮರಿ ಆಗಿರುವವರು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ ತಮಗಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತರಾದವರ ಆತ್ಮಗಳು ಬಲಿಪೀಠದ ಕೆಳಗಿರುವುದನ್ನು ಕಂಡೆನು.</verse>
				<verse number="10">ಅವರು ಮಹಾಶಬ್ದದಿಂದ, “ಒಡೆಯನೇ, ಪವಿತ್ರನೇ, ಸತ್ಯವಂತನೇ ನಮ್ಮ ರಕ್ತ ಸುರಿಸಿದ ಲೋಕನಿವಾಸಿಗಳಿಗೆ ತೀರ್ಪನ್ನೂ ಪ್ರತಿದಂಡನೆಯನ್ನೂ ಮಾಡಲು ಇನ್ನೆಷ್ಟು ಸಮಯ ಬೇಕು?” ಎಂದು ಕೂಗಿದರು.</verse>
				<verse number="11">ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಬಿಳೀ ನಿಲುವಂಗಿಯು ಕೊಡಲಾಗಿತ್ತು. ಇನ್ನು ಸ್ವಲ್ಪಕಾಲ ಅವರಂತೆಯೇ ವಧಿಸಲಾಗಬೇಕಾಗಿರುವ ಅವರ ಜೊತೆ ಸೇವಕರ ಮತ್ತು ಸಹೋದರರ ಸಂಖ್ಯೆ ಪೂರ್ಣಗೊಳ್ಳುವ ತನಕ ಕಾದಿರಬೇಕೆಂದು ಅವರಿಗೆ ಹೇಳಲಾಯಿತು.</verse>
				<verse number="12">ಕುರಿಮರಿ ಆಗಿರುವವರು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾ ಭೂಕಂಪವಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.</verse>
				<verse number="13">ಬಿರುಗಾಳಿಯಿಂದ ಆಕಾಶದ ನಕ್ಷತ್ರಗಳು ಅಂಜೂರದ ಕಾಯಿಗಳಂತೆ ಭೂಮಿಗೆ ಬಿದ್ದವು.</verse>
				<verse number="14">ಆಕಾಶವು ಸುರುಳಿಯಂತೆ ಸುತ್ತಿಕೊಂಡು ಹೊರಟುಹೋಯಿತು. ಪ್ರತಿ ಬೆಟ್ಟಗಳು ಮತ್ತು ದ್ವೀಪಗಳು ತಮ್ಮ ಸ್ಥಳಗಳಿಂದ ಕದಲಿದವು.</verse>
				<verse number="15">ಅನಂತರ ಭೂರಾಜರುಗಳು, ಮಹಾಪುರುಷರು, ಸಹಸ್ರಾಧಿಪತಿಗಳು, ಐಶ್ವರ್ಯವಂತರು, ಬಲಿಷ್ಠರು, ದಾಸರು ಹಾಗೂ ಸ್ವತಂತ್ರರು, ಗವಿ ಮತ್ತು ಬೆಟ್ಟಗಳ ಬಂಡೆಗಳಲ್ಲಿ ತಮ್ಮನ್ನು ಮರೆಮಾಡಿಕೊಂಡು,</verse>
				<verse number="16">ಬೆಟ್ಟಗುಡ್ಡಗಳಿಗೆ, “ನಮ್ಮ ಮೇಲೆ ಬಿದ್ದು ಸಿಂಹಾಸನದ ಮೇಲೆ ಕುಳಿತಿರುವವನ ಮುಖದಿಂದ ಮತ್ತು ಕುರಿಮರಿ ಆಗಿರುವವರ ಕೋಪಾಗ್ನಿಯಿಂದ ನಮ್ಮನ್ನು ಮರೆಮಾಡಿರಿ.</verse>
				<verse number="17">ಏಕೆಂದರೆ, ಅವರ ಕೋಪಾಗ್ನಿಯ ಮಹಾದಿನವು ಬಂದಿದೆ, ಅದರ ಮುಂದೆ ಯಾರು ನಿಂತಾರು?” ಎಂದು ಹೇಳಿದರು.</verse>
			</chapter>
			<chapter number="7">
				<verse number="1">ಇದಾದನಂತರ ನಾಲ್ಕು ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತಿರುವುದನ್ನು ಕಂಡೆನು. ಅವರು ಭೂಮಿಯ ಮೇಲಾಗಲಿ, ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿಯನ್ನು ತಡೆಹಿಡಿದಿದ್ದರು.</verse>
				<verse number="2">ಆಗ ಮತ್ತೊಬ್ಬ ದೂತನು, ಜೀವಸ್ವರೂಪರಾದ ದೇವರ ಮುದ್ರೆಯನ್ನು ಹಿಡಿದು ಪೂರ್ವದಿಕ್ಕಿನಿಂದ ಏರಿಬರುವುದನ್ನು ಕಂಡೆನು. ಭೂಮಿ ಮತ್ತು ಸಮುದ್ರವನ್ನು ಬಾಧಿಸುವ ಶಕ್ತಿ ಹೊಂದಿದ ನಾಲ್ಕು ದೂತರಿಗೆ ಅವನು ಮಹಾಶಬ್ದದಿಂದ,</verse>
				<verse number="3">“ನಾವು ನಮ್ಮ ದೇವರ ದಾಸರ ಹಣೆಗಳ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ಹಾನಿಪಡಿಸಬೇಡ!” ಎಂದು ಹೇಳಿದನು.</verse>
				<verse number="4">ಆಗ ಮುದ್ರೆ ಹೊಂದಿರುವವರ ಸಂಖ್ಯೆಯು ನನಗೆ ಕೇಳಿಸಿತು. ಇಸ್ರಾಯೇಲಿನ ಎಲ್ಲಾ ಕುಲಗಳಿಂದ ಮುದ್ರೆಹಾಕಿಸಿಕೊಂಡವರು 1,44,000 ಜನರು.</verse>
				<verse number="5">ಯೂದ ಕುಲದಿಂದ ಮುದ್ರೆಹಾಕಿಸಿಕೊಂಡವರು 12,000, ರೂಬೇನ್ ಕುಲದಿಂದ 12,000, ಗಾದ್ ಕುಲದಿಂದ 12,000,</verse>
				<verse number="6">ಆಶೇರ್ ಕುಲದಿಂದ 12,000, ನಫ್ತಲೀಮ ಕುಲದಿಂದ 12,000, ಮನಸ್ಸೆ ಕುಲದಿಂದ 12,000,</verse>
				<verse number="7">ಸಿಮೆಯೋನ್ ಕುಲದಿಂದ 12,000, ಲೇವಿ ಕುಲದಿಂದ 12,000, ಇಸ್ಸಾಕರ್ ಕುಲದಿಂದ 12,000,</verse>
				<verse number="8">ಜೆಬುಲೋನ್ ಕುಲದಿಂದ 12,000, ಯೋಸೇಫನ ಕುಲದಿಂದ 12,000, ಬೆನ್ಯಾಮೀನ್ ಕುಲದಿಂದ ಮುದ್ರೆಹಾಕಿಸಿಕೊಂಡವರು 12,000 ಜನರು.</verse>
				<verse number="9">ಇದಾದನಂತರ ಯಾರೂ ಎಣಿಸಲಾಗದಂಥ ಮಹಾ ಜನಸಮೂಹವನ್ನು ಕಂಡೆನು. ಅವರು ಪ್ರತಿ ರಾಷ್ಟ್ರ, ಕುಲ, ಜನ ಮತ್ತು ಭಾಷೆಯವರಾಗಿದ್ದು, ಯಜ್ಞದ ಕುರಿಮರಿ ಆಗಿರುವವರ ಮುಂದೆಯೂ ಸಿಂಹಾಸನದ ಮುಂದೆಯೂ ನಿಂತಿದ್ದರು. ಅವರು ಬಿಳಿ ನಿಲುವಂಗಿಗಳನ್ನು ಧರಿಸಿದ್ದವರಾಗಿ, ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.</verse>
				<verse number="10">ಅವರು ಮಹಾಧ್ವನಿಯಿಂದ ಹೀಗೆ ಕೂಗಿದರು: “ಸಿಂಹಾಸನದಲ್ಲಿ ಕೂತಿರುವ ನಮ್ಮ ದೇವರಿಗೂ, ಕುರಿಮರಿ ಆಗಿರುವವರಿಗೂ, ರಕ್ಷಣೆಯು ಸೇರತಕ್ಕದ್ದಾಗಿದೆ.”</verse>
				<verse number="11">ಸಿಂಹಾಸನ, ಹಿರಿಯರು ಮತ್ತು ನಾಲ್ಕು ಜೀವಿಗಳ ಸುತ್ತಲೂ ದೇವದೂತರು ನಿಂತಿದ್ದರು. ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು ದೇವರನ್ನು ಆರಾಧಿಸಿ,</verse>
				<verse number="12">“ಆಮೆನ್! ಸ್ತೋತ್ರ, ಮಹಿಮೆ, ಜ್ಞಾನ, ಕೃತಜ್ಞತೆ, ಗೌರವ, ಶಕ್ತಿ, ಬಲ ನಮ್ಮ ದೇವರಿಗೆ ಯುಗಯುಗಾಂತರಕ್ಕೂ ಉಂಟಾಗಲಿ. ಆಮೆನ್!” ಎಂದು ಹೇಳುತ್ತಿದ್ದರು.</verse>
				<verse number="13">ಆಗ ಹಿರಿಯರಲ್ಲೊಬ್ಬನು ನನ್ನನ್ನು, “ಈ ಬಿಳಿ ನಿಲುವಂಗಿಯನ್ನು ತೊಟ್ಟ ಇವರು ಯಾರು? ಎಲ್ಲಿಂದ ಬಂದವರು?” ಎಂದು ಕೇಳಿದನು.</verse>
				<verse number="14">ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”</verse>
				<verse number="15">ಆದ್ದರಿಂದ, “ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು, ದೇವರ ಆಲಯದಲ್ಲಿ ಹಗಲಿರುಳೂ ದೇವರನ್ನು ಸೇವೆಮಾಡುವರು. ಸಿಂಹಾಸನದ ಮೇಲೆ ಕೂತಿದ್ದವರು ಅವರನ್ನು ಆವರಿಸಿ ಸಂರಕ್ಷಿಸಿದರು.</verse>
				<verse number="16">‘ಇವರಿಗೆ ಇನ್ನೆಂದಿಗೂ ಹಸಿವೆಯಾಗಲಿ; ಬಾಯಾರಿಕೆಯಾಗಲಿ ಆಗುವುದಿಲ್ಲ. ಇದಲ್ಲದೆ ಸೂರ್ಯನ ಬಿಸಿಲಾದರೂ,’ ಯಾವ ಝಳವಾದರೂ ಇವರಿಗೆ ತಟ್ಟುವುದಿಲ್ಲ.</verse>
				<verse number="17">ಏಕೆಂದರೆ, ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿ ಆಗಿರುವವರು ಇವರನ್ನು ಮೇಯಿಸಿ; ‘ಜೀವಜಲದ ಒರತೆಗಳ ಬಳಿ ನಡೆಸುವರು.’ ‘ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವರು,’ ” ಎಂದು ಹೇಳಿದನು.</verse>
			</chapter>
			<chapter number="8">
				<verse number="1">ಕುರಿಮರಿ ಆಗಿರುವವರು ಏಳನೆಯ ಮುದ್ರೆಯನ್ನು ಒಡೆದಾಗ ಪರಲೋಕದಲ್ಲಿ ಸುಮಾರು ಅರ್ಧ ತಾಸಿನವರೆಗೂ ನಿಶ್ಶಬ್ದವಿತ್ತು.</verse>
				<verse number="2">ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತೂರಿಗಳನ್ನು ಕೊಡಲಾಗಿತ್ತು.</verse>
				<verse number="3">ಚಿನ್ನದ ಧೂಪಾರತಿಯಿದ್ದ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಸಿಂಹಾಸನದ ಮುಂದಿನ ಚಿನ್ನದ ಧೂಪವೇದಿಯ ಮೇಲೆ ದೇವಜನರೆಲ್ಲರ ಪ್ರಾರ್ಥನೆಗಳೊಂದಿಗೆ ಅರ್ಪಿಸಲು ಅವನಿಗೆ ಬಹಳ ಧೂಪವು ಕೊಡಲಾಗಿತ್ತು.</verse>
				<verse number="4">ದೇವದೂತನ ಕೈಯಿಂದ ಧೂಪದ ಹೊಗೆಯು, ದೇವಜನರ ಪ್ರಾರ್ಥನೆಗಳೊಂದಿಗೆ ಸೇರಿ, ದೇವಸನ್ನಿಧಿಗೆ ಏರಿಹೋಯಿತು.</verse>
				<verse number="5">ಆಗ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಬಲಿಪೀಠದ ಬೆಂಕಿಯಿಂದ ಅದನ್ನು ತುಂಬಿಸಿ, ಭೂಮಿಯ ಮೇಲೆ ಎಸೆದನು. ಆಗ ಗುಡುಗುಗಳೂ ಸಪ್ಪಳವೂ ಮಿಂಚುಗಳೂ ಮತ್ತು ಭೂಕಂಪವೂ ಉಂಟಾದವು.</verse>
				<verse number="6">ಆಗ ಏಳು ತುತೂರಿಗಳನ್ನು ಹಿಡಿದಿರುವ ಏಳು ದೇವದೂತರು ಅವುಗಳನ್ನು ಊದಲು ಸಿದ್ಧರಾದರು.</verse>
				<verse number="7">ಮೊದಲನೆಯ ದೇವದೂತನು ತನ್ನ ತುತೂರಿಯನ್ನು ಊದಲು, ರಕ್ತದೊಂದಿಗೆ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿದವು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು ಮತ್ತು ಹಸಿರು ಹುಲ್ಲೆಲ್ಲಾ ಸುಟ್ಟುಹೋಯಿತು.</verse>
				<verse number="8">ಎರಡನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಉರಿಯುತ್ತಿರುವ ದೊಡ್ಡ ಬೆಟ್ಟದಂಥದ್ದು ಸಮುದ್ರದಲ್ಲಿ ಎಸೆಯಲಾಯಿತು. ಸಮುದ್ರದ ಮೂರರಲ್ಲಿ ಒಂದು ಭಾಗವು ರಕ್ತವಾಯಿತು.</verse>
				<verse number="9">ಸಮುದ್ರದ ಜೀವಿಗಳಲ್ಲಿ ಮೂರರಲ್ಲಿ ಒಂದು ಭಾಗ ಸತ್ತವು ಮತ್ತು ಹಡಗುಗಳಲ್ಲಿ ಮೂರರಲ್ಲಿ ಒಂದು ಭಾಗ ನಾಶವಾದವು.</verse>
				<verse number="10">ಮೂರನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ದೀಪದಂತೆ ಉರಿಯುವ ದೊಡ್ಡ ನಕ್ಷತ್ರವು ಆಕಾಶದಿಂದ ನದಿಗಳ ಹಾಗೂ ನೀರಿನ ಬುಗ್ಗೆಗಳ ಮೂರರಲ್ಲಿ ಒಂದು ಭಾಗದ ಮೇಲೆ ಬಿದ್ದಿತು.</verse>
				<verse number="11">ಆ ನಕ್ಷತ್ರದ ಹೆಸರು, ಮಾಚಿಪತ್ರೆ, ಆಗ ಮೂರರಲ್ಲಿ ಒಂದು ಭಾಗವು ಕಹಿಯಾಯಿತು ಮತ್ತು ಆ ನೀರು ಕಹಿಯಾದ್ದರಿಂದ ಅನೇಕ ಜನರು ಸತ್ತರು.</verse>
				<verse number="12">ನಾಲ್ಕನೆಯ ದೇವದೂತನು ತನ್ನ ತುತೂರಿಯನ್ನು ಊದಿದನು, ಆಗ ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗವು ಬಡೆದಿದ್ದರಿಂದ ಮೂರನೇ ಭಾಗವು ಕತ್ತಲಾಯಿತು. ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಬಡೆದಿದ್ದರಿಂದ, ಮೂರನೇ ಭಾಗವು ಕತ್ತಲಾಯಿತು. ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಹೋಯಿತು. ರಾತ್ರಿಯು ಹಾಗೆಯೇ ಆಯಿತು.</verse>
				<verse number="13">ನಾನು ನೋಡಲಾಗಿ, ಆಕಾಶದ ಮಧ್ಯದಲ್ಲಿ ಹಾರುತ್ತಿರುವ ಒಂದು ಗರುಡ ಪಕ್ಷಿ ಮಹಾಧ್ವನಿಯಿಂದ: ಇನ್ನೂ ಊದಲಿರುವ ಮೂವರು ದೂತರ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿಗಳಿಗೆ, “ಅಯ್ಯೋ! ಅಯ್ಯೋ! ಅಯ್ಯೋ!” ಎಂದಿತು.</verse>
			</chapter>
			<chapter number="9">
				<verse number="1">ಐದನೆಯ ದೇವದೂತನು ತನ್ನ ತುತೂರಿಯನ್ನು ಊದಲು; ಆಕಾಶದಿಂದ ಒಂದು ನಕ್ಷತ್ರವು ಭೂಮಿಗೆ ಬಿದ್ದದ್ದನ್ನು ಕಂಡೆನು. ಅದಕ್ಕೆ ಪಾತಾಳ ಸುರಂಗದ ಬೀಗದ ಕೈ ಕೊಡಲಾಗಿತ್ತು.</verse>
				<verse number="2">ಆತನು ಆ ಪಾತಾಳವನ್ನು ತೆರೆಯಲು, ಅದರೊಳಗಿಂದ ಹೊಗೆಯು ಮಹಾ ಕುಲುಮೆಯಿಂದ ಬರುವ ಹೊಗೆಯಂತೆ ಏರಿತು. ಪಾತಾಳದ ಆ ಹೊಗೆಯಿಂದ ಸೂರ್ಯ ಮತ್ತು ಆಕಾಶಕ್ಕೆ ಕತ್ತಲು ಕವಿಯಿತು.</verse>
				<verse number="3">ಆ ಹೊಗೆಯೊಳಗಿಂದ ಮಿಡತೆಗಳು ಭೂಮಿಯ ಮೇಲೆ ಬಂದವು. ಅವುಗಳಿಗೆ ಭೂಮಿಯ ಮೇಲಿನ ಚೇಳುಗಳಿಗೆ ಇರುವಂತೆ ಶಕ್ತಿಯನ್ನು ಕೊಡಲಾಗಿತ್ತು.</verse>
				<verse number="4">ಅವುಗಳಿಗೆ ಹಣೆಯ ಮೇಲೆ ದೇವರ ಮುದ್ರೆಯನ್ನು ಹಾಕಿಸಿಕೊಳ್ಳದ ಮನುಷ್ಯರನ್ನು ಬಿಟ್ಟು, ಭೂಮಿಯ ಮೇಲಿನ ಹುಲ್ಲು ಅಥವಾ ಯಾವುದೇ ಪಲ್ಯ ಅಥವಾ ಮರ, ಈ ಯಾವುದಕ್ಕೂ ತೊಂದರೆ ಕೊಡಬಾರದೆಂಬುದಾಗಿ ಹೇಳಲಾಯಿತು.</verse>
				<verse number="5">ಅವುಗಳು ಅವರನ್ನು ಕೊಲ್ಲದೆ, ಐದು ತಿಂಗಳುಗಳವರೆಗೆ ಯಾತನೆಪಡಿಸುವುದಕ್ಕೆ ಅಧಿಕಾರ ಕೊಡಲಾಯಿತು. ಅವರ ಯಾತನೆಯು, ಚೇಳು ತನ್ನ ಕೊಂಡಿಯಿಂದ ಮನುಷ್ಯರನ್ನು ಕುಟುಕಿಹಾಕಿದಾಗ ಆಗುವ ನೋವಿನಂತಿತ್ತು.</verse>
				<verse number="6">ಆ ದಿನಗಳಲ್ಲಿ ಜನರು ಮರಣವನ್ನು ಹುಡುಕುವರು, ಆದರೆ ಅದನ್ನು ಯಾವ ರೀತಿಯಿಂದಲೂ ಕಾಣರು; ಅವರು ಸಾಯಲು ಹಾರೈಸುವರು, ಆದರೆ ಮರಣವು ಅವರಿಂದ ಓಡಿ ಹೋಗುವುದು.</verse>
				<verse number="7">ಆ ಮಿಡತೆಗಳು ಯುದ್ಧಕ್ಕೆ ಸನ್ನದ್ಧವಾದ ಕುದುರೆಗಳಂತಿದ್ದವು. ಅವುಗಳ ತಲೆಯ ಮೇಲೆ ಚಿನ್ನದಂತಿರುವ ಕಿರೀಟಗಳಿದ್ದವು. ಅವುಗಳ ಮುಖವು ಮಾನವರ ಮುಖಗಳಂತೆ ಇದ್ದವು.</verse>
				<verse number="8">ಅವುಗಳ ಕೂದಲು ಸ್ತ್ರೀಯರ ಕೂದಲಿನಂತಿದ್ದು, ಅವುಗಳಿಗೆ ಸಿಂಹಗಳಿಗಿದ್ದಂತೆ ಹಲ್ಲುಗಳಿದ್ದವು.</verse>
				<verse number="9">ಅವುಗಳಿಗೆ ಕಬ್ಬಿಣದ ಕವಚದಂಥ ಕವಚಗಳಿದ್ದವು. ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ಅನೇಕ ರಥಾಶ್ವಗಳಂತಿತ್ತು.</verse>
				<verse number="10">ಅವುಗಳಿಗೆ ಚೇಳಿನಂತೆ ಬಾಲವೂ ಕೊಂಡಿಯೂ ಇದ್ದವು. ಅವುಗಳಿಗೆ ಮನುಷ್ಯರನ್ನು ಐದು ತಿಂಗಳುಗಳ ಕಾಲ ತಮ್ಮ ಬಾಲಗಳಿಂದ ಬಾಧಿಸುವ ಸಾಮರ್ಥ್ಯವಿತ್ತು.</verse>
				<verse number="11">ಹೀಬ್ರೂ ಭಾಷೆಯಲ್ಲಿ, ಅಬದ್ದೋನ್ ಎಂದೂ ಗ್ರೀಕ್ ಭಾಷೆಯಲ್ಲಿ, ಅಪೊಲ್ಲುವೋನ್ ಎಂಬ ಹೆಸರಿನ ಪಾತಾಳ ಲೋಕದ ದೂತನು ಅವರ ಅರಸನು.</verse>
				<verse number="12">ಮೊದಲನೆಯ ವಿಪತ್ತು ಕಳೆದುಹೋಯಿತು; ಇಗೋ, ಇವುಗಳ ನಂತರ ಇನ್ನೂ ಎರಡು ವಿಪತ್ತುಗಳು ಬರಲಿವೆ.</verse>
				<verse number="13">ಆರನೆಯ ದೇವದೂತನು ತನ್ನ ತುತೂರಿಯನ್ನು ಊದಲು, ದೇವರ ಮುಂದೆ ಇರುವ ಚಿನ್ನದ ಬಲಿಪೀಠದ ನಾಲ್ಕು ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದೆನು.</verse>
				<verse number="14">ಅದು ತುತೂರಿಯನ್ನು ಹೊಂದಿರುವ ಆರನೆಯ ದೇವದೂತನಿಗೆ, “ಯೂಫ್ರೇಟೀಸ್ ಮಹಾನದಿಯ ಬಳಿ ಕಟ್ಟಿರುವ ನಾಲ್ಕು ದೇವದೂತರನ್ನು ಬಿಚ್ಚಿಬಿಡು,” ಎಂದು ಹೇಳಿತು.</verse>
				<verse number="15">ಮಾನವಕುಲದ ಮೂರರಲ್ಲೊಂದು ಭಾಗವನ್ನು ಕೊಲ್ಲುವುದಕ್ಕಾಗಿ ಆ ಗಳಿಗೆ, ದಿನ, ತಿಂಗಳು ಮತ್ತು ವರ್ಷಕ್ಕಾಗಿಯೇ ಸಿದ್ಧವಾಗಿದ್ದ ನಾಲ್ಕು ದೇವದೂತರನ್ನು ಬಿಡುಗಡೆ ಮಾಡಲಾಯಿತು.</verse>
				<verse number="16">ಕುದುರೆ ಸೈನಿಕರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನನಗೆ ಕೇಳಿಸಿತು.</verse>
				<verse number="17">ನಾನು ನನ್ನ ದರ್ಶನದಲ್ಲಿ ಕುದುರೆಗಳನ್ನೂ ಸವಾರರನ್ನೂ ಕಂಡೆನು. ಅವರ ಕವಚಗಳು ಬೆಂಕಿಯ ಕೆಂಪು, ನೀಲಮಣಿ ಹಾಗೂ ಹಳದಿ ಬಣ್ಣದಂತೆಯೂ ಇದ್ದವು. ಕುದುರೆಗಳ ತಲೆಗಳು ಸಿಂಹದ ತಲೆಗಳಂತಿದ್ದವು. ಅವುಗಳ ಬಾಯೊಳಗಿಂದ ಬೆಂಕಿ, ಹೊಗೆ ಮತ್ತು ಗಂಧಕ ಹೊರಬಂದವು.</verse>
				<verse number="18">ಅವುಗಳ ಬಾಯೊಳಗಿಂದ ಬಂದ ಬೆಂಕಿ ಹೊಗೆ ಮತ್ತು ಗಂಧಕಗಳೆಂಬ ಮೂರು ಉಪದ್ರವಗಳಿಂದ ಮಾನವಕುಲದ ಮೂರರಲ್ಲೊಂದು ಭಾಗದ ಜನರು ಹತರಾದರು.</verse>
				<verse number="19">ಕುದುರೆಗಳ ಶಕ್ತಿಯು ಅವುಗಳ ಬಾಯಲ್ಲಿಯೂ ಬಾಲದಲ್ಲಿಯೂ ಇತ್ತು. ಏಕೆಂದರೆ ಅವುಗಳ ಬಾಲಗಳು ತಲೆಗಳನ್ನು ಹೊಂದಿದ್ದ ಸರ್ಪಗಳಂತಿದ್ದವು. ಅವುಗಳಿಂದ ಅವು ಕೇಡನ್ನುಂಟು ಮಾಡುತ್ತವೆ.</verse>
				<verse number="20">ಈ ಉಪದ್ರವಗಳಿಂದ ಸಾಯದೆ ಉಳಿದ ಮನುಷ್ಯರು ಇನ್ನೂ ತಮ್ಮ ದುಷ್ಟಕೃತ್ಯಗಳನ್ನು ಬಿಟ್ಟು ಪಶ್ಚಾತ್ತಾಪ ಪಡಲಿಲ್ಲ. ಅವರು ದೆವ್ವಗಳನ್ನೂ, ನೋಡಲು, ಕೇಳಲು, ನಡೆಯಲು ಆಗದ ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳ ವಿಗ್ರಹಗಳನ್ನು ಆರಾಧಿಸುವುದನ್ನೂ ನಿಲ್ಲಿಸಲಿಲ್ಲ.</verse>
				<verse number="21">ಇದಲ್ಲದೆ ಅವರು ಕೊಲೆ, ಮಾಟ, ಜಾರತ್ವ ಮತ್ತು ಕಳ್ಳತನಗಳಿಗಾಗಿಯೂ ಪಶ್ಚಾತ್ತಾಪ ಪಡಲಿಲ್ಲ.</verse>
			</chapter>
			<chapter number="10">
				<verse number="1">ಆಗ ನಾನು ಮತ್ತೊಬ್ಬ ಬಲಿಷ್ಠನಾದ ದೇವದೂತನು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಮುಗಿಲ ಬಿಲ್ಲು ಇತ್ತು. ಅವನ ಮುಖವು ಸೂರ್ಯನಂತಿದ್ದು, ಅವನ ಕಾಲುಗಳು ಅಗ್ನಿಸ್ತಂಭಗಳಂತಿದ್ದವು.</verse>
				<verse number="2">ಅವನು ತನ್ನ ಕೈಯಲ್ಲಿ ತೆರೆದಿದ್ದ ಒಂದು ಚಿಕ್ಕ ಸುರುಳಿಯನ್ನು ಹಿಡಿದುಕೊಂಡಿದ್ದನು. ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೂ ತನ್ನ ಎಡಗಾಲನ್ನು ಭೂಮಿಯ ಮೇಲೂ ಇಟ್ಟುಕೊಂಡು,</verse>
				<verse number="3">ಸಿಂಹದ ಘರ್ಜನೆಯಂತೆ ಮಹಾ ಸ್ವರದಿಂದ ಕೂಗಿದನು. ಅವನು ಕೂಗಿದಾಗ, ಏಳು ಗುಡುಗುಗಳು ಮಾತನಾಡಿದವು.</verse>
				<verse number="4">ಏಳು ಗುಡುಗುಗಳು ಮಾತನಾಡಿದಾಗ, ನಾನು ಬರೆಯಬೇಕೆಂದಿದ್ದೆನು. ಆದರೆ ಪರಲೋಕದಿಂದ ಬಂದ ಶಬ್ದವು, “ನೀನು ಆ ಏಳು ಗುಡುಗುಗಳು ಹೇಳಿರುವುದನ್ನು ಮುದ್ರೆಹಾಕಿ ಮುಚ್ಚಿಡು. ಅದನ್ನು ಬರೆಯಬೇಡ,” ಎಂದು ಹೇಳುವುದನ್ನು ಕೇಳಿದೆನು.</verse>
				<verse number="5">ಆಗ ಸಮುದ್ರದ ಮೇಲೂ ಭೂಮಿಯ ಮೇಲೂ ನಿಂತಿರುವ ದೇವದೂತನು ತನ್ನ ಬಲಗೈಯನ್ನು ಪರಲೋಕದ ಕಡೆಗೆ ಎತ್ತಿ,</verse>
				<verse number="6">ಯುಗಯುಗಾಂತರಕ್ಕೂ ಜೀವಿಸುವವರೂ ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿದವರ ಮೇಲೆ ಆಣೆ ಇಟ್ಟು ಹೇಳಿದ್ದೇನೆಂದರೆ, “ಇನ್ನು ಆಲಸ್ಯವಾಗುವುದಿಲ್ಲ!</verse>
				<verse number="7">ಆದರೆ ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಬೇಕೆಂದಿರುವ ದಿನಗಳಲ್ಲಿ ದೇವರು ತನ್ನ ಸೇವಕರಾದ ಪ್ರವಾದಿಗಳಿಗೆ ಪ್ರಕಟಿಸಿದಂತೆಯೇ, ದೇವರ ರಹಸ್ಯವು ನೆರವೇರುವುದು.”</verse>
				<verse number="8">ಆಗ ಪರಲೋಕದಿಂದ ನಾನು ಕೇಳಿದ್ದ ಧ್ವನಿಯು ಮತ್ತೊಮ್ಮೆ ನನ್ನೊಂದಿಗೆ ಮಾತನಾಡಿ, “ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿರುವ ದೇವದೂತನ ಕೈಯಲ್ಲಿರುವ ತೆರೆದ ಸುರುಳಿಯನ್ನು ತೆಗೆದುಕೋ,” ಎಂದು ಹೇಳಿತು.</verse>
				<verse number="9">ಆಗ ನಾನು ದೇವದೂತನ ಬಳಿ ಹೋಗಿ, ಅವನನ್ನು, ಆ ಚಿಕ್ಕ ಸುರುಳಿಯನ್ನು ಕೊಡುವಂತೆ ಕೇಳಿದೆನು. ಅವನು ನನಗೆ, “ಇದನ್ನು ತೆಗೆದುಕೊಂಡು ತಿನ್ನು. ಅದು ನಿನ್ನ ಹೊಟ್ಟೆಯಲ್ಲಿ ಕಹಿಯಾಗಿರುವುದು. ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವುದು,” ಎಂದು ಹೇಳಿದನು.</verse>
				<verse number="10">ನಾನು ದೇವದೂತನ ಕೈಯಿಂದ ಆ ಚಿಕ್ಕ ಸುರುಳಿಯನ್ನು ತೆಗೆದುಕೊಂಡು ತಿಂದೆನು. ಇದರ ರುಚಿಯು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಆದರೆ ನಾನು ಅದನ್ನು ತಿಂದಾಗ, ನನ್ನ ಹೊಟ್ಟೆ ಕಹಿಯಾಯಿತು.</verse>
				<verse number="11">ಆಗ ನನಗೆ, “ನೀನು ಅನೇಕ ಪ್ರಜೆ, ರಾಷ್ಟ್ರ, ಜನಾಂಗ, ಭಾಷೆ ಮತ್ತು ಅರಸರ ಮುಂದೆ ಪುನಃ ಪ್ರವಾದಿಸಬೇಕು,” ಎಂದು ಹೇಳಲಾಯಿತು.</verse>
			</chapter>
			<chapter number="11">
				<verse number="1">ದಂಡದಂತಿದ್ದ ಒಂದು ಅಳತೆ ಕೋಲು ನನಗೆ ಕೊಡಲಾಯಿತು. ನನಗೆ ಹೀಗೆ ಹೇಳಲಾಯಿತು: “ನೀನೆದ್ದು ದೇವರ ಆಲಯವನ್ನೂ ಬಲಿಪೀಠವನ್ನೂ ಅಳತೆಮಾಡಿ, ಆಲಯದಲ್ಲಿ ಆರಾಧನೆ ಮಾಡುವವರನ್ನು ಎಣಿಸು.</verse>
				<verse number="2">ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು. ಏಕೆಂದರೆ ಅದು ಯೆಹೂದ್ಯರಲ್ಲದವರಿಗಾಗಿ ಬಿಟ್ಟಿದೆ. ಅವರು ಪರಿಶುದ್ಧ ಪಟ್ಟಣವನ್ನು ನಲವತ್ತೆರಡು ತಿಂಗಳು ತುಳಿದಾಡುವರು.</verse>
				<verse number="3">ನನ್ನ ಇಬ್ಬರು ಸಾಕ್ಷಿಗಳಿಗೆ ಗೋಣಿತಟ್ಟುಗಳನ್ನು ಹೊದ್ದುಕೊಂಡು, ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವಂತೆ ಮಾಡುವೆನು,”</verse>
				<verse number="4">ಇವರು, “ಎಣ್ಣೆಯ ಮರಗಳೂ ಭೂಲೋಕದ ಒಡೆಯ ಆಗಿರುವವರ ಮುಂದೆ ನಿಂತಿರುವ ಎರಡು ದೀಪಸ್ತಂಭಗಳೂ ಆಗಿದ್ದಾರೆ.”</verse>
				<verse number="5">ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬಯಸಿದರೆ, ಇವರ ಬಾಯೊಳಗಿಂದ ಬೆಂಕಿ ಹೊರಟು, ಇವರ ಶತ್ರುಗಳನ್ನು ದಹಿಸಿಬಿಡುವುದು. ಇವರಿಗೆ ಯಾವನಾದರೂ ಕೇಡನ್ನುಂಟುಮಾಡಬಯಸಿದರೆ, ಅವನಿಗೂ ಅದೇ ರೀತಿಯಾಗಿ ಕೊಲೆಯಾಗಬೇಕು.</verse>
				<verse number="6">ತಾವು ಪ್ರವಾದಿಸುತ್ತಿರುವ ದಿನಗಳಲ್ಲಿ, ಮಳೆ ಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಇವರಿಗೆ ಇರುವುದು. ಇದಲ್ಲದೆ ಇವರಿಗೆ ಬಯಸಿದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಬಾಧಿಸುವುದಕ್ಕೂ ಅಧಿಕಾರ ಇರುತ್ತದೆ.</verse>
				<verse number="7">ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದ ನಂತರ, ಪಾತಾಳದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ, ಇವರನ್ನು ಜಯಿಸಿ ಕೊಲ್ಲುವುದು.</verse>
				<verse number="8">ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಗಳು ಸಾಂಕೇತಿಕವಾಗಿ ಸೊದೋಮ್ ಹಾಗೂ ಈಜಿಪ್ಟ್ ಎಂದೂ ಹೆಸರುಗಳಿರುವುದು. ಇವರ ಒಡೆಯ ಆಗಿರುವವರನ್ನು ಸಹ ಅಲ್ಲಿಯೇ ಶಿಲುಬೆಗೆ ಹಾಕಲಾಗಿತ್ತು.</verse>
				<verse number="9">ಆಗ ಸಕಲ ಪ್ರಜೆ, ಕುಲ, ಭಾಷೆ, ಜನಾಂಗಗಳಿಗೆ ಸೇರಿದವರು, ಇವರ ಶವಗಳನ್ನು ಸಮಾಧಿಯಲ್ಲಿಡಲು ಅನುಮತಿಸದೆ, ಮೂರುವರೆ ದಿನಗಳವರೆಗೂ ನೋಡುತ್ತಾ ಇರುವರು.</verse>
				<verse number="10">ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ, ಇದರ ವಿಷಯವಾಗಿ ಭೂನಿವಾಸಿಗಳು ಸಂತೋಷಿಸಿ, ಹರ್ಷಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.</verse>
				<verse number="11">ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮವು ಬಂದು, ಆ ಶವಗಳಲ್ಲಿ ಪ್ರವೇಶಿಸಲು, ಅವು ಕಾಲೂರಿ ನಿಂತವು. ಅವರನ್ನು ಕಂಡವರಿಗೆ ಮಹಾ ಭಯವುಂಟಾಯಿತು.</verse>
				<verse number="12">ಆಗ ಅವರಿಗೆ, “ಇಲ್ಲಿ ಮೇಲಕ್ಕೆ ಬನ್ನಿರಿ,” ಎಂದು ಮಹಾಧ್ವನಿಯು ಕೇಳಿಸಿತು. ಅವರು ಮೇಘದಲ್ಲಿ ಪರಲೋಕಕ್ಕೆ ಏರಿಹೋದರು. ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.</verse>
				<verse number="13">ಅದೇ ಗಳಿಗೆಯಲ್ಲಿ, ಮಹಾ ಭೂಕಂಪ ಉಂಟಾಗಿ ಆ ಪಟ್ಟಣದ ಹತ್ತರಲ್ಲೊಂದು ಭಾಗವು ಬಿದ್ದುಹೋಯಿತು. ಆ ಭೂಕಂಪದಲ್ಲಿ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರಿಗೆ ಮಹಿಮೆಯನ್ನು ಸಲ್ಲಿಸಿದರು.</verse>
				<verse number="14">ಎರಡನೆಯ ವಿಪತ್ತು ಕಳೆದುಹೋಯಿತು. ಮೂರನೆಯ ವಿಪತ್ತು ಬೇಗನೆ ಬರಲಿದೆ.</verse>
				<verse number="15">ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”</verse>
				<verse number="16">ತರುವಾಯ ದೇವರ ಸನ್ನಿಧಿಯಲ್ಲಿ ತಮ್ಮ ಸಿಂಹಾಸನಗಳ ಮೇಲೆ ಕುಳಿತಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ದೇವರಿಗೆ ಅಡ್ಡಬಿದ್ದು,</verse>
				<verse number="17">ಹೀಗೆ ಹೇಳಿದರು: “ಕರ್ತ ಆಗಿರುವ, ಸರ್ವಶಕ್ತರಾದ ದೇವರೇ, ಮೊದಲು ಇದ್ದು ಈಗಲೂ ಇರುವವರೂ, ನೀವು ನಿಮ್ಮ ಮಹಾ ಅಧಿಕಾರವನ್ನು ಪಡೆದು ಆಳಿದ್ದರಿಂದ ನಿಮಗೆ ಕೃತಜ್ಞತೆಗಳನ್ನು ಅರ್ಪಿಸುತ್ತೇವೆ.</verse>
				<verse number="18">ರಾಷ್ಟ್ರಗಳು ಕೋಪಗೊಂಡವು, ನಿಮ್ಮ ರೋಷವು ಈಗ ಬಂದಿದೆ. ಸತ್ತವರು ತೀರ್ಪು ಹೊಂದುವ ಸಮಯ ಬಂದಿದೆ. ನೀವು ನಿಮ್ಮ ಸೇವಕರಾದ ಪ್ರವಾದಿಗಳಿಗೂ ದೇವಜನರಿಗೂ ನಿಮ್ಮ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು, ಲೋಕ ನಾಶಕರನ್ನು ದಂಡಿಸುವಿರಿ.”</verse>
				<verse number="19">ಆಗ ಪರಲೋಕದಲ್ಲಿರುವ ದೇವರ ಆಲಯವು ತೆರೆಯಿತು. ದೇವರ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು. ಇದಲ್ಲದೆ ಮಿಂಚುಗಳೂ ಸಪ್ಪಳಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆಲಿಕಲ್ಲಿನ ಮಳೆಯೂ ಉಂಟಾದವು.</verse>
			</chapter>
			<chapter number="12">
				<verse number="1">ಪರಲೋಕದಲ್ಲಿ ಒಂದು ಮಹಾ ಸೂಚನೆಯು ಕಾಣಿಸಿತು: ಒಬ್ಬ ಸ್ತ್ರೀಯು ಸೂರ್ಯನನ್ನು ಧರಿಸಿಕೊಂಡಿದ್ದಳು, ಆಕೆಯ ಪಾದಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು.</verse>
				<verse number="2">ಆಕೆಯು ಗರ್ಭಿಣಿಯಾಗಿದ್ದು, ಪ್ರಸವವೇದನೆಯಿಂದ ನರಳುತ್ತಾ ಕೂಗುತ್ತಿದ್ದಳು.</verse>
				<verse number="3">ಪರಲೋಕದಲ್ಲಿ ಮತ್ತೊಂದು ಸೂಚನೆಯು ಕಾಣಿಸಿತು. ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಅದರ ತಲೆಯ ಮೇಲೆ ಏಳು ಮುಕುಟಗಳಿದ್ದವು.</verse>
				<verse number="4">ಅದು ತನ್ನ ಬಾಲದಿಂದ ಆಕಾಶದ ನಕ್ಷತ್ರಗಳಲ್ಲಿ ಮೂರರಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಚೆಲ್ಲಿತು. ಹೆರುತ್ತಿದ್ದ ಆ ಸ್ತ್ರೀಯು ಹೆತ್ತ ಕೂಡಲೇ, ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟಸರ್ಪವು ಅವಳ ಮುಂದೆ ನಿಂತುಕೊಂಡಿತ್ತು.</verse>
				<verse number="5">ಆಕೆ, “ರಾಷ್ಟ್ರಗಳನ್ನು ಕಬ್ಬಿಣದ ಕೋಲಿನಿಂದ ಆಳಬೇಕಾದ” ಒಂದು ಗಂಡು ಮಗುವನ್ನು ಹೆತ್ತಳು. ಆಕೆಯ ಕೂಸು ದೇವರ ಬಳಿಗೂ ಅವರ ಸಿಂಹಾಸನದ ಬಳಿಗೂ ಎತ್ತಲಾಯಿತು.</verse>
				<verse number="6">ಆ ಸ್ತ್ರೀಯು ಅರಣ್ಯಕ್ಕೆ ಓಡಿ ಹೋದಳು. ಅಲ್ಲಿ ಆಕೆಗೆ ಸಾವಿರದ ಇನ್ನೂರ ಅರವತ್ತು ದಿನಗಳವರೆಗೆ ಪೋಷಣೆಯಾಗಬೇಕೆಂದು ದೇವರು ಸ್ಥಳವನ್ನು ಸಿದ್ಧಮಾಡಿದ್ದರು.</verse>
				<verse number="7">ಪರಲೋಕದಲ್ಲಿ ಯುದ್ಧನಡೆಯಿತು. ಮೀಕಾಯೇಲನೂ ಅವನ ದೂತರೂ ಘಟಸರ್ಪನ ಮೇಲೆ ಯುದ್ಧಮಾಡಿದರು. ಘಟಸರ್ಪನೂ ಅವನ ದೂತರೂ ಯುದ್ಧಮಾಡಿ ಸೋತುಹೋದರು.</verse>
				<verse number="8">ಅವರಿಗೆ ಸಾಕಷ್ಟು ಸಾಮರ್ಥ್ಯವಿಲ್ಲದ್ದರಿಂದ, ಪರಲೋಕದೊಳಗೆ ಅವರಿಗಿರುವ ಸ್ಥಾನವನ್ನು ಕಳೆದುಕೊಂಡರು.</verse>
				<verse number="9">ಭೂಲೋಕದವರನ್ನೆಲ್ಲಾ ವಂಚಿಸುತ್ತಿದ್ದ ಆ ಮಹಾ ಘಟಸರ್ಪನು ಎಂದರೆ ಪಿಶಾಚನೆಂತಲೂ ಸೈತಾನನೆಂತಲೂ ಕರೆಯಲಾದ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರನ್ನೂ ಅವನೊಂದಿಗೆ ತಳ್ಳಲಾಯಿತು.</verse>
				<verse number="10">ಆಗ ಪರಲೋಕದಲ್ಲಿ ಮಹಾಧ್ವನಿಯನ್ನು ಕೇಳಿದೆನು. ಅದು, “ರಕ್ಷಣೆಯೂ ಶಕ್ತಿಯೂ ರಾಜ್ಯವೂ ಈಗ ನಮ್ಮ ದೇವರದಾದವು. ದೇವರ ಕ್ರಿಸ್ತ ಆಗಿರುವವರ ಅಧಿಕಾರವು ಈಗ ಸ್ಥಾಪಿತವಾಯಿತು. ಹಗಲಿರುಳು ನಮ್ಮ ಸಹೋದರರ ಮೇಲೆ, ನಮ್ಮ ದೇವರ ಮುಂದೆ ದೂರು ಹೇಳುವ ದೂರುಗಾರನನ್ನು ತಳ್ಳಲಾಗಿದೆ.</verse>
				<verse number="11">ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಕುರಿಮರಿಯಾಗಿರುವವರ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.</verse>
				<verse number="12">ಆದ್ದರಿಂದ ಪರಲೋಕವೇ, ಅದರಲ್ಲಿ ವಾಸಮಾಡುವವರೇ ಹರ್ಷಗೊಳ್ಳಿರಿ. ಭೂಮಿಯೇ, ಸಮುದ್ರವೇ, ನಿಮಗೆ ದುರ್ಗತಿ! ಎನ್ನುತ್ತೇನೆ. ಏಕೆಂದರೆ, ಪಿಶಾಚನು ತನಗಿರುವ ಕಾಲವು ಕೊಂಚವೆಂದು ತಿಳಿದು, ಮಹಾ ರೋಷವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ,” ಎಂಬುದಾಗಿ ಹೇಳಿತು.</verse>
				<verse number="13">ಘಟಸರ್ಪನು ತಾನು ಭೂಮಿಗೆ ತಳ್ಳಲಾಗಿರುವುದನ್ನು ಕಂಡಾಗ, ಅವನು ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಅಟ್ಟಿಸಿಕೊಂಡು ಹೋದನು.</verse>
				<verse number="14">ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವುದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲಾದವು. ಅಲ್ಲಿ ಆಕೆಯು ಒಂದುಕಾಲ, ಎರಡುಕಾಲ ಮತ್ತು ಅರ್ಧಕಾಲ ಸರ್ಪನಿಗೆ ಸಿಗದಂತೆ ಪೋಷಣೆ ಹೊಂದಿದಳು.</verse>
				<verse number="15">ಆ ಸರ್ಪನು ಪ್ರವಾಹದಿಂದ ಸ್ತ್ರೀಯನ್ನು ಸೆಳೆದುಕೊಂಡು ಹೋಗಬೇಕೆಂದು ಆಕೆಯ ಹಿಂದೆ ತನ್ನ ಬಾಯೊಳಗಿಂದ ನೀರನ್ನು ನದಿಯಂತೆ ಬಿಟ್ಟನು.</verse>
				<verse number="16">ಆದರೆ ಭೂಮಿಯು ಆ ಸ್ತ್ರೀಗೆ ಸಹಾಯ ಮಾಡಿತು. ಅದು ಬಾಯಿತೆರೆದು, ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ನದಿಯನ್ನು ನುಂಗಿಬಿಟ್ಟಿತು.</verse>
				<verse number="17">ಆಗ ಘಟಸರ್ಪನು ಸ್ತ್ರೀಯ ಮೇಲೆ ಬಹುಕೋಪಗೊಂಡು, ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಎಂದರೆ, ದೇವರ ಆಜ್ಞೆಗಳನ್ನು ಕೈಗೊಂಡು ನಡೆದು, ಯೇಸುವಿನ ಸಾಕ್ಷಿಯನ್ನು ಹೊಂದಿದವರ ಮೇಲೆ ಯುದ್ಧಮಾಡುವುದಕ್ಕೆ ಹೊರಟನು.</verse>
			</chapter>
			<chapter number="13">
				<verse number="1">ಘಟಸರ್ಪವು ಸಮುದ್ರತೀರದ ಮರಳಿನ ಮೇಲೆ ನಿಂತನು. ಸಮುದ್ರದೊಳಗೆ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಕೊಂಬುಗಳ ಮೇಲೆ ಹತ್ತು ಮುಕುಟಗಳೂ ತಲೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು.</verse>
				<verse number="2">ನಾನು ಕಂಡ ಮೃಗವು ಚಿರತೆಯಂತಿತ್ತು. ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ತನ್ನ ಶಕ್ತಿಯನ್ನೂ ಸಿಂಹಾಸನವನ್ನೂ ಮಹಾ ಅಧಿಕಾರವನ್ನೂ ಕೊಟ್ಟನು.</verse>
				<verse number="3">ಮೃಗದ ತಲೆಗಳಲ್ಲಿ ಒಂದು ಮರಣಾಂತಿಕ ಗಾಯ ಹೊಂದಿದಂತಿರುವುದನ್ನು ನೋಡಿದೆನು. ಆದರೆ ಆ ಮರಣಕರವಾದ ಗಾಯವು ವಾಸಿಯಾಯಿತು. ಭೂಲೋಕವೆಲ್ಲಾ ಆ ಮೃಗವನ್ನು ಕಾಣುತ್ತಾ ಆಶ್ಚರ್ಯಪಟ್ಟಿತು.</verse>
				<verse number="4">ಜನರು ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟಿದ್ದರಿಂದ, ಆ ಘಟಸರ್ಪನನ್ನು ಆರಾಧಿಸಿದರು. ಇದಲ್ಲದೆ ಆ ಮೃಗವನ್ನೂ ಆರಾಧಿಸಿ, “ಈ ಮೃಗಕ್ಕೆ ಸಮಾನರು ಯಾರು? ಇದರೊಡನೆ ಯುದ್ಧಮಾಡಬಲ್ಲವರು ಯಾರು?” ಎಂದರು.</verse>
				<verse number="5">ಆ ಮೃಗಕ್ಕೆ ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಕೊಡಲಾಯಿತು. ನಲವತ್ತೆರಡು ತಿಂಗಳುಗಳವರೆಗೆ ಕಾರ್ಯಸಾಧಿಸುವ ಅಧಿಕಾರವನ್ನೂ ಅದಕ್ಕೆ ಕೊಡಲಾಯಿತು.</verse>
				<verse number="6">ಆ ಮೃಗವು ತನ್ನ ಬಾಯಿತೆರೆದು, ದೇವರಿಗೆ ವಿರುದ್ಧವಾಗಿ ದೂಷಿಸಿ, ಅವರ ನಾಮವನ್ನೂ ಅವರ ನಿವಾಸವನ್ನೂ ಮತ್ತು ಪರಲೋಕ ನಿವಾಸಿಗಳನ್ನೂ ದೂಷಿಸಿತು.</verse>
				<verse number="7">ಇದಲ್ಲದೆ ಅದಕ್ಕೆ ಪರಿಶುದ್ಧರ ಮೇಲೆ ಯುದ್ಧಮಾಡಿ, ಅವರನ್ನು ಜಯಿಸುವುದಕ್ಕೆ ಬಲವು ಕೊಡಲಾಯಿತು ಮತ್ತು ಸಕಲ ಕುಲ, ಪ್ರಜೆ, ಭಾಷೆ, ರಾಷ್ಟ್ರಗಳ ಮೇಲೆ ಅದಕ್ಕೆ ಅಧಿಕಾರವು ಸಹ ಕೊಡಲಾಯಿತು.</verse>
				<verse number="8">ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.</verse>
				<verse number="9">ಕಿವಿಯುಳ್ಳವನು ಕೇಳಲಿ.</verse>
				<verse number="10">“ಸೆರೆಹಿಡಿಯುವವನು ತಾನೇ ಸೆರೆಯಾಗಿ ಹೋಗುವನು. ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗುವನು.” ಇದರಲ್ಲಿ ದೇವಜನರ ಸೈರಣೆಯೂ ನಂಬಿಕೆಯೂ ಇವೆ.</verse>
				<verse number="11">ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಅದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು ಆದರೆ ಘಟಸರ್ಪದಂತೆ ಮಾತನಾಡಿತು.</verse>
				<verse number="12">ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಎದುರಿನಲ್ಲಿ ಚಲಾಯಿಸಿತು. ಇದು ಮರಣಕರವಾದ ಗಾಯದಿಂದ ವಾಸಿಯಾದ ಮೊದಲನೆಯ ಮೃಗವನ್ನು ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು.</verse>
				<verse number="13">ಎರಡನೆಯ ಮೃಗವೂ ಮಹಾಸೂಚಕಕಾರ್ಯಗಳನ್ನು ನಡೆಸಿತು ಮತ್ತು ಜನರ ಮುಂದೆ ಬೆಂಕಿ ಆಕಾಶದಿಂದ ಭೂಮಿಗೆ ಬೀಳುವಂತೆ ಮಾಡಿತು.</verse>
				<verse number="14">ಆ ಮೊದಲನೆಯ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವನ್ನು ಕೊಡಲಾಗಿದ್ದರಿಂದ ಭೂನಿವಾಸಿಗಳನ್ನು ಮೋಸಗೊಳಿಸುತ್ತದೆ. ಭೂಮಿಯ ಮೇಲೆ ವಾಸಿಸುವವರು, ಕತ್ತಿಯಿಂದ ಗಾಯಹೊಂದಿ, ಸಾಯದೆ ಬದುಕಿದ ಮೃಗದ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಹೇಳುತ್ತದೆ.</verse>
				<verse number="15">ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಕೊಡಲಾಗಿದ್ದರಿಂದ, ಆ ವಿಗ್ರಹವು ಮಾತನಾಡುವಂತೆಯೂ ತನ್ನನ್ನು ಆರಾಧನೆ ಮಾಡದವರನ್ನು ಕೊಲ್ಲುವಂತೆಯೂ ಮಾಡುತ್ತದೆ.</verse>
				<verse number="16">ಅದು ಚಿಕ್ಕವರು, ದೊಡ್ಡವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ಗುಲಾಮರು, ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತು ಹೊಂದಬೇಕೆಂದೂ</verse>
				<verse number="17">ಆ ಗುರುತಾಗಲಿ, ಮೃಗದ ಹೆಸರಾಗಲಿ, ಅದರ ಹೆಸರಿನ ಸಂಖ್ಯೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುವುದು.</verse>
				<verse number="18">ಇದರಲ್ಲಿ ಜ್ಞಾನವಿದೆ. ಬುದ್ಧಿಯುಳ್ಳವನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನ ಸಂಖ್ಯೆಯಾಗಿದೆ. ಅವನ ಸಂಖ್ಯೆಯು 666.</verse>
			</chapter>
			<chapter number="14">
				<verse number="1">ನಾನು ನೋಡಲಾಗಿ, ಕುರಿಮರಿ ಆಗಿರುವವರು ಚೀಯೋನ್ ಪರ್ವತದ ಮೇಲೆ ನಿಂತಿದ್ದರು. ಕುರಿಮರಿಯವರ ಜೊತೆಯಲ್ಲಿ ಒಂದು ಲಕ್ಷ ನಲವತ್ನಾಲ್ಕು ಸಾವಿರ ಮಂದಿ ಇದ್ದರು. ಅವರ ಹಣೆಯ ಮೇಲೆ ಕುರಿಮರಿಯವರ ಹೆಸರೂ ಕುರಿಮರಿಯವರ ತಂದೆಯ ಹೆಸರೂ ಬರೆಯಲಾಗಿದ್ದವು.</verse>
				<verse number="2">ಇದಲ್ಲದೆ ಪರಲೋಕದಿಂದ ಜಲ ಪ್ರವಾಹದಂತೆಯೂ ಮಹಾ ಗುಡುಗಿನ ಶಬ್ದದಂತೆಯೂ ಇದ್ದ ಶಬ್ದವನ್ನು ಕೇಳಿದೆನು. ನಾನು ಕೇಳಿದ ಆ ಶಬ್ದವು ಕಿನ್ನರಿಗಳನ್ನು ನುಡಿಸುತ್ತಿರುವ ಕಿನ್ನರರ ಶಬ್ದದಂತಿತ್ತು.</verse>
				<verse number="3">ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸಹಾಡನ್ನು ಹಾಡಿದರು. ಭೂಲೋಕದೊಳಗಿಂದ ಕೊಂಡುಕೊಳ್ಳಲಾದ ಆ ಒಂದು ಲಕ್ಷ ನಲವತ್ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.</verse>
				<verse number="4">ಸ್ತ್ರೀ ಸಹವಾಸದಿಂದ ಮಲಿನರಾಗದವರು ಇವರೇ. ಏಕೆಂದರೆ ಇವರು ಕನ್ಯೆಯರಂತೆ ನಿಷ್ಕಳಂಕರು. ಕುರಿಮರಿ ಆಗಿರುವವರು ಹೋದಡೆಯಲ್ಲೆಲ್ಲಾ ಅವರ ಹಿಂದೆ ಹೋಗುವವರು ಇವರೇ. ಇವರು ಮನುಷ್ಯರೊಳಗಿಂದ ಕೊಂಡುಕೊಳ್ಳಲಾಗಿ ದೇವರಿಗೂ ಕುರಿಮರಿಯಾಗಿರುವವರಿಗೂ ಪ್ರಥಮಫಲದಂತಾದರು.</verse>
				<verse number="5">ಇವರ ಬಾಯಲ್ಲಿ ಸುಳ್ಳು ಸಿಕ್ಕಲಿಲ್ಲ. ಇವರು ನಿರ್ದೋಷಿಗಳಾಗಿದ್ದಾರೆ.</verse>
				<verse number="6">ಮತ್ತೊಬ್ಬ ದೇವದೂತನು ಆಕಾಶದ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ರಾಷ್ಟ್ರ, ಹಿನ್ನಲೆ, ಭಾಷೆ ಹಾಗೂ ಪ್ರಜೆಗಳವರಿಗೂ ಸಾರಿ ಹೇಳುವುದಕ್ಕೆ ನಿತ್ಯ ಸುವಾರ್ತೆಯು ಅವನಲ್ಲಿತ್ತು.</verse>
				<verse number="7">ಅವನು, “ನೀವು ದೇವರಿಗೆ ಭಯಪಟ್ಟು ಅವರಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಅವರು ನ್ಯಾಯತೀರ್ಪು ಮಾಡುವ ಸಮಯ ಬಂದಿದೆ. ಭೂಪರಲೋಕಗಳನ್ನೂ ಸಮುದ್ರವನ್ನೂ ನೀರಿನ ಬುಗ್ಗೆಗಳನ್ನೂ ಉಂಟುಮಾಡಿದ ದೇವರನ್ನೇ ಆರಾಧಿಸಿರಿ!” ಎಂದು ಮಹಾಧ್ವನಿಯಿಂದ ಹೇಳಿದನು.</verse>
				<verse number="8">ಅವನ ಹಿಂದೆ ಎರಡನೆಯವನಾದ ಒಬ್ಬ ದೇವದೂತನು ಬಂದು, “ ‘ಬಿದ್ದಳು, ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ಸಕಲ ಜನಾಂಗಗಳಿಗೆ ತನ್ನ ಅತ್ಯಾಸಕ್ತಿಯ ಅನೈತಿಕತೆವೆಂಬ ದ್ರಾಕ್ಷಾರಸವನ್ನು ಕುಡಿಸಿದಳು,” ಎಂದು ಹೇಳಿದನು.</verse>
				<verse number="9">ಅವರ ಹಿಂದೆ ಮೂರನೆಯವನಾದ ಒಬ್ಬ ದೇವದೂತನು ಬಂದು, “ಯಾವುದಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ, ಕೈಯ ಮೇಲಾಗಲಿ ಗುರುತು ಹಾಕಿಸಿಕೊಂಡರೆ,</verse>
				<verse number="10">ಅವನೂ ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರೆಸದೆ ಹಾಕಿದ ಅವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಕುರಿಮರಿಯಾಗಿರುವವರ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.</verse>
				<verse number="11">ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ. ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಿಗಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರು ಹಗಲಿರುಳೂ ವಿಶ್ರಾಂತಿ ಪಡುವುದಿಲ್ಲಾ!” ಎಂದು ಮಹಾಶಬ್ದದಿಂದ ಹೇಳಿದನು.</verse>
				<verse number="12">ಇದಕ್ಕಾಗಿಯೇ ದೇವರ ಆಜ್ಞೆಗಳನ್ನೂ ಯೇಸುವಿನಲ್ಲಿ ನಂಬಿಕೆಯನ್ನೂ ಕಾಪಾಡುವ ದೇವಜನರ ತಾಳ್ಮೆಯ ಸಹಿಷ್ಣುತೆ ಇದರಲ್ಲಿದೆ.</verse>
				<verse number="13">ಪರಲೋಕದಿಂದ ಒಂದು ಧ್ವನಿಯು ನನಗೆ, “ಇಂದಿನಿಂದ ಕರ್ತರಲ್ಲಿ ವಿಶ್ವಾಸವುಳ್ಳವರು ಧನ್ಯರು ಎಂಬುದಾಗಿ ಬರೆ!” ಎಂದು ಹೇಳಿತು. ಅದಕ್ಕೆ ಪವಿತ್ರಾತ್ಮ ದೇವರು, “ಹೌದು, ಅವರ ಪ್ರಯಾಸಗಳು ತೀರಿದವು ಅವರಿಗೆ ವಿಶ್ರಾಂತಿಯಾಗುವುದು, ಅವರ ಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ!” ಎಂದು ಹೇಳುತ್ತಾರೆ.</verse>
				<verse number="14">ನಾನು ನೋಡಲಾಗಿ, ಒಂದು ಬಿಳಿ ಮೇಘವನ್ನೂ ಆ ಮೇಘದ ಮೇಲೆ ಮನುಷ್ಯಪುತ್ರರಂತೆ ಒಬ್ಬರು ಕುಳಿತಿರುವುದನ್ನು ಕಂಡೆನು. ಅವರ ತಲೆಯ ಮೇಲೆ ಚಿನ್ನದ ಕಿರೀಟವೂ ಆತನ ಕೈಯಲ್ಲಿ ಹರಿತವಾದ ಕುಡುಗೋಲೂ ಇದ್ದವು.</verse>
				<verse number="15">ಆಗ ಮತ್ತೊಬ್ಬ ದೂತನು ದೇವಾಲಯದೊಳಗಿಂದ ಬಂದು ಮೇಘದ ಮೇಲೆ ಕುಳಿತಿದ್ದವರಿಗೆ, “ಭೂಮಿಯ ಪೈರು ಮಾಗಿದೆ. ಕೊಯ್ಯುವ ಕಾಲ ಬಂದಿರುವುದರಿಂದ, ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ!” ಎಂದು ಮಹಾಧ್ವನಿಯಿಂದ ಕೂಗಿದನು.</verse>
				<verse number="16">ಮೇಘದ ಮೇಲೆ ಕುಳಿತಿದ್ದವರು ತಮ್ಮ ಕುಡುಗೋಲನ್ನು ಭೂಮಿಯ ಮೇಲೆ ಹಾಕಿದರು. ಆಗ ಭೂಮಿಯ ಪೈರು ಕೊಯ್ಯಲಾಯಿತು.</verse>
				<verse number="17">ಮತ್ತೊಬ್ಬ ದೂತನು ಪರಲೋಕದಲ್ಲಿರುವ ದೇವಾಲಯದೊಳಗಿಂದ ಬಂದನು. ಅವನ ಬಳಿಯೂ ಹರಿತವಾದ ಕುಡುಗೋಲು ಇತ್ತು.</verse>
				<verse number="18">ತರುವಾಯ ಬೆಂಕಿಗೆ ಅಧಿಕಾರಿಯಾದ ಇನ್ನೊಬ್ಬ ದೂತನು ಬಲಿಪೀಠದ ಬಳಿಯಿಂದ ಬಂದು, ಆ ಹರಿತವಾದ ಕುಡುಗೋಲಿನವನಿಗೆ, “ನಿನ್ನ ಹರಿತವಾದ ಕುಡುಗೋಲನ್ನು ಹಾಕಿ, ಭೂಮಿಯ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ಯಿ. ಅದರ ಹಣ್ಣುಗಳು ಪೂರ್ತಿಯಾಗಿ ಮಾಗಿವೆ!” ಎಂದು ಮಹಾಧ್ವನಿಯಿಂದ ಕೂಗಿದನು.</verse>
				<verse number="19">ಆಗ ಆ ದೂತನು ತನ್ನ ಕುಡುಗೋಲನ್ನು ಭೂಮಿಗೆ ಹಾಕಿ, ಭೂಮಿಯ ದ್ರಾಕ್ಷಿಹಣ್ಣನ್ನು ಕೂಡಿಸಿ, ದೇವರ ಕೋಪವೆಂಬ ದೊಡ್ಡ ದ್ರಾಕ್ಷಿಯ ತೊಟ್ಟಿಯಲ್ಲಿ ಹಾಕಿದನು.</verse>
				<verse number="20">ಆಗ ಪಟ್ಟಣದ ಹೊರಗೆ ದ್ರಾಕ್ಷಿಯ ತೊಟ್ಟಿಯನ್ನು ತುಳಿಯಲಾಯಿತು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು, ಕುದುರೆಗಳ ಕಡಿವಾಣವನ್ನು ಮುಟ್ಟುವಷ್ಟು ಮುನ್ನೂರು ಕಿಲೋಮೀಟರ್ ದೂರ ಹರಿಯಿತು.</verse>
			</chapter>
			<chapter number="15">
				<verse number="1">ನಾನು ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ಕಂಡೆನು. ಏಳುಮಂದಿ ದೂತರಲ್ಲಿ ಕಡೆಯ ಏಳು ಉಪದ್ರವಗಳಿದ್ದವು. ಏಕೆಂದರೆ, ಅವುಗಳಲ್ಲಿ ದೇವರ ಕೋಪವು ಸಂಪೂರ್ಣವಾಗುವುದು.</verse>
				<verse number="2">ನನಗೆ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಒಂದು ಕಾಣಿಸಿತು. ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಹೆಸರಿನ ಸಂಖ್ಯೆಯ ಮೇಲೆಯೂ ಜಯಹೊಂದಿದವರು ದೇವರ ಕಿನ್ನರಿಗಳನ್ನು ಕೈಯಲ್ಲಿ ಹಿಡಿದುಕೊಂಡು, ಗಾಜಿನ ಸಮುದ್ರದ ಮೇಲೆ ನಿಂತುಕೊಂಡು,</verse>
				<verse number="3">ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ.</verse>
				<verse number="4">ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರು? ಏಕೆಂದರೆ ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಟವಾದ್ದರಿಂದ ಎಲ್ಲಾ ರಾಷ್ಟ್ರಗಳವರು ಬಂದು, ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು,” ಎಂದು ಹೇಳಿದರು.</verse>
				<verse number="5">ಇದಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿರುವ ಸಾಕ್ಷಿಯ ಗುಡಾರದ ದೇವಾಲಯವು ತೆರೆದಿರುವುದನ್ನು ಕಂಡೆನು.</verse>
				<verse number="6">ಆ ದೇವಾಲಯದೊಳಗಿಂದ ಏಳು ಉಪದ್ರವಗಳನ್ನು ಹಿಡಿದು, ಆ ಏಳು ದೇವದೂತರು ಬಂದರು. ಅವರು ಪ್ರಕಾಶಮಯವಾದ ಶುಭ್ರವಾದ ನಾರುಮಡಿಯನ್ನು ಧರಿಸಿಕೊಂಡಿದ್ದರು. ತಮ್ಮ ಎದೆಗಳಿಗೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.</verse>
				<verse number="7">ನಾಲ್ಕು ಜೀವಿಗಳಲ್ಲಿ ಒಂದು, ಆ ಏಳು ದೂತರಿಗೆ, ಯುಗಯುಗಾಂತರಗಳಲ್ಲಿಯೂ ಜೀವಿಸುವವರಾದ ದೇವರ ಕೋಪದಿಂದ ತುಂಬಿದ್ದ ಏಳು ಚಿನ್ನದ ಬೋಗುಣಿಗಳನ್ನು ಕೊಟ್ಟಿತು.</verse>
				<verse number="8">ದೇವರ ಮಹಿಮೆಯಿಂದಲೂ ಅವರ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ದೇವಾಲಯವು ಆವರಿಸಿದ ಕಾರಣ, ಆ ಏಳುಮಂದಿ ದೇವದೂತರ ಏಳು ಉಪದ್ರವಗಳು ತೀರುವ ತನಕ, ಆ ದೇವಾಲಯದೊಳಗೆ ಪ್ರವೇಶಿಸುವುದಕ್ಕೆ ಯಾರಿಗೂ ಆಗಲಿಲ್ಲ.</verse>
			</chapter>
			<chapter number="16">
				<verse number="1">ಆಗ ದೇವಾಲಯದಿಂದ ಬಂದ ಗಟ್ಟಿಯಾದ ಧ್ವನಿಯು, ಏಳು ದೇವದೂತರಿಗೂ, “ಹೋಗಿರಿ, ಏಳು ಬೋಗುಣಿಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿರಿ!” ಎಂದು ಹೇಳುವುದನ್ನು ನಾನು ಕೇಳಿದೆನು.</verse>
				<verse number="2">ಮೊದಲನೆಯ ದೂತನು ಹೋಗಿ ತನ್ನ ಬೋಗುಣಿಯೊಳಗಿರುವುದನ್ನು ಭೂಮಿಯ ಮೇಲೆ ಸುರಿಯಲು, ಮೃಗದ ಗುರುತನ್ನು ಹಾಕಿಸಿಕೊಂಡು ಅದರ ವಿಗ್ರಹವನ್ನು ಆರಾಧಿಸುವ ಎಲ್ಲಾ ಜನರ ಮೇಲೆ ಭೀಕರವಾದ ಕೆಟ್ಟ ಹುಣ್ಣುಗಳು ಎದ್ದವು.</verse>
				<verse number="3">ಎರಡನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಸಮುದ್ರದ ಮೇಲೆ ಸುರಿಯಲು, ಅದು ಸತ್ತ ಮನುಷ್ಯನ ರಕ್ತದಂತಾಯಿತು, ಸಕಲ ಜೀವಿಗಳೂ ಸತ್ತವು.</verse>
				<verse number="4">ಮೂರನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ನದಿಗಳ ಮೇಲೂ ನೀರಿನ ಬುಗ್ಗೆಗಳ ಮೇಲೂ ಸುರಿಯಲು, ಅವು ರಕ್ತವಾದವು.</verse>
				<verse number="5">ಆಗ ಜಲಾಶಯದ ಜಲಗಳ ದೂತನು: “ನೀವು ಇದ್ದವರೂ, ಇರುವವರೂ ಆಗಿರುವ ಪರಿಶುದ್ಧರು. ನೀವು ನೀತಿವಂತರಾಗಿದ್ದೀರಿ. ಏಕೆಂದರೆ, ನೀವು ಇವುಗಳಿಗೆ ನ್ಯಾಯತೀರಿಸುವಿರಿ.</verse>
				<verse number="6">ಅವರು ನಿಮ್ಮ ಭಕ್ತರ ಮತ್ತು ನಿಮ್ಮ ಪ್ರವಾದಿಗಳ ರಕ್ತವನ್ನು ಸುರಿಸಿದ್ದಾರೆ. ನೀವು ಅವರಿಗೆ ಕುಡಿಯುವುದಕ್ಕೆ ರಕ್ತವನ್ನೇ ಕೊಟ್ಟಿರುವಿರಿ. ಅವರು ಅದಕ್ಕೆ ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.</verse>
				<verse number="7">ಆಗ ಬಲಿಪೀಠವು ಹೀಗೆ ಮಾತನಾಡುವುದನ್ನು ಕೇಳಿದೆನು: “ಕರ್ತಾ, ಸರ್ವಶಕ್ತರಾದ ದೇವರೇ, ನಿಮ್ಮ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ.”</verse>
				<verse number="8">ನಾಲ್ಕನೆಯ ದೇವದೂತನು ತನ್ನ ಬೋಗುಣಿಯೊಳಗಿರುವುದನ್ನು ಸೂರ್ಯನ ಮೇಲೆ ಸುರಿಯಲು, ಸೂರ್ಯನಿಗೆ ಮನುಷ್ಯರನ್ನು ಬೆಂಕಿಯಿಂದ ಕಂದಿಸುವ ಅಧಿಕಾರ ಕೊಡಲಾಯಿತು.</verse>
				<verse number="9">ಮನುಷ್ಯರು ಬಲವಾದ ಕಾವಿನಿಂದ ಕಂದಿ ಹೋದಾಗ್ಯೂ, ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದರು. ಆದರೆ ಅವರು ದೇವರಿಗೆ ಮಹಿಮೆಯನ್ನು ಸಲ್ಲಿಸುವ ಹಾಗೆ ಪಶ್ಚಾತ್ತಾಪ ಪಡಲಿಲ್ಲ.</verse>
				<verse number="10">ಐದನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಮೃಗದ ಸಿಂಹಾಸನದ ಮೇಲೆ ಸುರಿಯಲು, ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು,</verse>
				<verse number="11">ತಮ್ಮ ನೋವುಗಳಿಗಾಗಿಯೂ ಹುಣ್ಣುಗಳಿಗಾಗಿಯೂ ಪರಲೋಕದ ದೇವರನ್ನು ದೂಷಿಸಿದರು. ಆದರೆ ಅವರು, ತಮ್ಮ ಕೃತ್ಯಗಳಿಗಾಗಿ ಪಶ್ಚಾತ್ತಾಪ ಪಡಲಿಲ್ಲ.</verse>
				<verse number="12">ಆರನೆಯ ದೂತನು ತನ್ನ ಬೋಗುಣಿಯೊಳಗಿರುವುದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಸುರಿಯಲು, ಪೂರ್ವದಿಕ್ಕಿನಿಂದ ಬರುವ ರಾಜರಿಗೆ ಮಾರ್ಗ ಸಿದ್ಧವಾಗುವಂತೆ ಅದರ ನೀರು ಬತ್ತಿಹೋಯಿತು.</verse>
				<verse number="13">ಆಗ ಕಪ್ಪೆಗಳಂತೆ ಕಾಣುವ ಮೂರು ಅಶುದ್ಧಾತ್ಮಗಳು ಘಟಸರ್ಪನ ಬಾಯೊಳಗಿಂದಲೂ ಮತ್ತು ಸುಳ್ಳು ಪ್ರವಾದಿಯ ಬಾಯೊಳಗಿಂದಲೂ ಮೃಗದ ಬಾಯೊಳಗಿಂದಲೂ ಬರುವುದನ್ನು ಕಂಡೆನು.</verse>
				<verse number="14">ಅವು ಸೂಚಕಕಾರ್ಯಗಳನ್ನು ನಡೆಸುವ ದೆವ್ವಗಳ ಆತ್ಮಗಳಾಗಿದ್ದು, ಭೂಲೋಕದ ರಾಜರುಗಳನ್ನು ಸರ್ವಶಕ್ತರಾದ ದೇವರ ಮಹಾದಿನದ ಯುದ್ಧಕ್ಕಾಗಿ ಕೂಡಿಸುವುದಕ್ಕಾಗಿ ಹೊರಟವು.</verse>
				<verse number="15">“ಇಗೋ, ನಾನು ಕಳ್ಳನು ಬರುವಂತೆ ಬರುತ್ತೇನೆ. ಬೆತ್ತಲೆಯಾಗಿ ತಿರುಗಾಡಿ, ಜನರಿಂದ ಅವಮಾನಗೊಳ್ಳದಂತೆ ಎಚ್ಚರವಾಗಿದ್ದು ತನ್ನ ವಸ್ತ್ರವನ್ನು ಯಾವನು ಕಾಪಾಡಿಕೊಳ್ಳುತ್ತಾನೋ ಅವನು ಧನ್ಯನು.”</verse>
				<verse number="16">ಆಗ ಅವು ಅವರನ್ನು ಹೀಬ್ರೂ ಭಾಷೆಯಲ್ಲಿ ಹರ್ಮಗೆದೋನ್ ಎಂಬ ಹೆಸರಿನ ಸ್ಥಳಕ್ಕೆ ಸೇರಿಸಿದವು.</verse>
				<verse number="17">ಏಳನೆಯ ದೂತನು ತನ್ನ ಬೋಗುಣಿಯಲ್ಲಿರುವುದನ್ನು ವಾಯುಮಂಡಲದ ಮೇಲೆ ಸುರಿಯಲು, ಆ ದೇವಾಲಯದೊಳಗಿನ ಸಿಂಹಾಸನದಿಂದ ಬಂದ ಮಹಾಧ್ವನಿಯು, “ಸಂಭವಿಸಿದ್ದಾಯಿತು” ಎಂದು ಹೇಳುವುದನ್ನು ಕೇಳಿದೆನು.</verse>
				<verse number="18">ಆಗ ಅಲ್ಲಿ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಮತ್ತು ಮಹಾಭೂಕಂಪವೂ ಸಂಭವಿಸಿದವು. ಮನುಷ್ಯನು ಭೂಮಿಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.</verse>
				<verse number="19">ಮಹಾ ಪಟ್ಟಣವು ಮೂರು ಭಾಗಗಳಾಗಿ ಹೋಯಿತು ಮತ್ತು ರಾಷ್ಟ್ರಗಳ ನಗರಗಳು ಬಿದ್ದವು. ಇದಲ್ಲದೆ ಮಹಾ ಬಾಬಿಲೋನಿಗೆ ರೋಷವೆಂಬ ದ್ರಾಕ್ಷಾರಸದ ಬಟ್ಟಲನ್ನು ಕೊಡುವಂತೆ ದೇವರಿಗೆ ಅದು ಜ್ಞಾಪಕಕ್ಕೆ ಬಂತು.</verse>
				<verse number="20">ಆಗ ಪ್ರತಿಯೊಂದು ದ್ವೀಪಗಳು ಮರೆಯಾಗಿ ಹೋದವು, ಬೆಟ್ಟಗಳು ಕಾಣದಂತಾದವು.</verse>
				<verse number="21">ಆಕಾಶದಿಂದ ಒಂದೊಂದು ಸುಮಾರು ನಲವತ್ತೈದು ಕಿಲೋಗ್ರಾಂ ತೂಕದ ಬಹುದೊಡ್ಡ ಆಲಿಕಲ್ಲುಗಳು ಮನುಷ್ಯರ ಮೇಲೆ ಬಿದ್ದವು. ಆಲಿಕಲ್ಲಿನ ಉಪದ್ರವವು ಬಹು ಹೆಚ್ಚಾಗಿದ್ದರಿಂದಲೂ ಮನುಷ್ಯರು ದೇವರನ್ನು ದೂಷಿಸಿದರು.</verse>
			</chapter>
			<chapter number="17">
				<verse number="1">ಏಳು ಬೋಗುಣಿಗಳನ್ನು ಹಿಡಿದಿದ್ದ ಏಳು ದೂತರಲ್ಲೊಬ್ಬನು ನನಗೆ, “ಬಾ, ಬಹಳ ನೀರುಗಳ ಮೇಲೆ ಕುಳಿತಿರುವ ಮಹಾಜಾರಸ್ತ್ರೀಗಾಗುವ ನ್ಯಾಯತೀರ್ಪನ್ನು ನಿನಗೆ ತೋರಿಸುತ್ತೇನೆ.</verse>
				<verse number="2">ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಆಕೆಯ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು,” ಎಂದು ಹೇಳಿದನು.</verse>
				<verse number="3">ಅನಂತರ ಅವನು ನನ್ನನ್ನು ಆತ್ಮನಲ್ಲಿ ಅರಣ್ಯಕ್ಕೆ ಒಯ್ದನು. ಅಲ್ಲಿ ಒಬ್ಬ ಸ್ತ್ರೀಯು, ಹತ್ತು ಕೊಂಬುಗಳೂ ಏಳು ತಲೆಗಳೂ ಇದ್ದು, ದೇವದೂಷಣೆಯ ಹೆಸರುಗಳಿಂದ ತುಂಬಿರುವ ಕಡುಗೆಂಪು ಬಣ್ಣದ ಮೃಗದ ಮೇಲೆ ಕುಳಿತಿರುವುದನ್ನು ಕಂಡೆನು.</verse>
				<verse number="4">ಆ ಸ್ತ್ರೀಯು ನೇರಳೆ ಮತ್ತು ಕಡುಗೆಂಪು ಬಣ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ, ಅಮೂಲ್ಯವಾದ ಹರಳು, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ ಅಸಹ್ಯವಾದ ವಸ್ತುಗಳಿಂದಲೂ ಮತ್ತು ತನ್ನ ಅಶುದ್ಧ ಅನೈತಿಕತೆಯಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು.</verse>
				<verse number="5">ಆಕೆಯ ಹಣೆಯ ಮೇಲೆ: “ಮಹಾ ಬಾಬಿಲೋನ್, ಜಾರ ಸ್ತ್ರೀಯರಿಗೂ ಭೂಮಿಯ ಎಲ್ಲಾ ಅಸಹ್ಯವಾದವುಗಳಿಗೂ ತಾಯಿ!” ಎಂದು ನಿಗೂಢ ಹೆಸರು ಬರೆದಿತ್ತು.</verse>
				<verse number="6">ಆ ಸ್ತ್ರೀಯು ಪರಿಶುದ್ಧರ ರಕ್ತವನ್ನೂ ಮತ್ತು ಯೇಸುವಿನ ಸಾಕ್ಷಿಗಳಾಗಿದ್ದವರ ರಕ್ತವನ್ನೂ ಕುಡಿದಿರುವುದನ್ನು ನಾನು ಕಂಡೆನು. ಆಕೆಯನ್ನು ನಾನು ಕಂಡಾಗ, ಬಹು ಆಶ್ಚರ್ಯಗೊಂಡೆನು.</verse>
				<verse number="7">ಆಗ ದೂತನು ನನಗೆ: “ನೀನೇಕೆ ಆಶ್ಚರ್ಯಪಟ್ಟೆ? ನಾನು ನಿನಗೆ ಆ ಸ್ತ್ರೀಯ ವಿಷಯವಾಗಿಯೂ ಅವಳು ಹೊತ್ತುಕೊಂಡಿದ್ದ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದ ಮೃಗದ ವಿಷಯವಾಗಿಯೂ ಇರುವ ಗೂಡಾರ್ಥವನ್ನು ನಿನಗೆ ತಿಳಿಸುವೆನು.</verse>
				<verse number="8">ನೀನು ಕಂಡ ಮೃಗವು ಒಮ್ಮೆ ಇತ್ತು, ಈಗ ಇಲ್ಲ, ಪಾತಾಳದೊಳಗಿನಿಂದ ಮೇಲೆ ಬಂದು ವಿನಾಶಕ್ಕೆ ಹೊರಡಲಿದೆ. ಲೋಕದ ಸೃಷ್ಟಿಯಾದ ದಿನದಿಂದ ಯಾರ ಯಾರ ಹೆಸರುಗಳು ಜೀವಗ್ರಂಥದಲ್ಲಿ ಬರೆದಿರುವುದಿಲ್ಲವೋ, ಆ ಭೂನಿವಾಸಿಗಳು ಮೃಗವನ್ನು ನೋಡಿ ಆ ಮೃಗವು ಹಿಂದೆ ಇತ್ತು, ಈಗ ಇಲ್ಲ, ಇನ್ನು ಮೇಲೆ ಬರಲಿದೆ ಎಂದು ಆಶ್ಚರ್ಯಗೊಳ್ಳುವರು.</verse>
				<verse number="9">“ಆ ಏಳು ತಲೆಗಳು, ಆ ಸ್ತ್ರೀ ಕುಳಿತುಕೊಂಡಿರುವ ಏಳು ಬೆಟ್ಟಗಳಾಗಿವೆ. ಅವು ಏಳು ರಾಜರುಗಳಾಗಿರುತ್ತವೆ.</verse>
				<verse number="10">ಅವರಲ್ಲಿ ಐದು ರಾಜರು ಬಿದ್ದಿದ್ದಾರೆ; ಒಬ್ಬನು ಇದ್ದಾನೆ, ಇನ್ನೊಬ್ಬನು ಇನ್ನೂ ಬಂದಿಲ್ಲ. ಅವನು ಬಂದಾಗ ಸ್ವಲ್ಪಕಾಲ ಇರಬೇಕಾಗುತ್ತದೆ.</verse>
				<verse number="11">ಹಿಂದೆ ಇದ್ದು ಈಗ ಇಲ್ಲದ ಆ ಮೃಗವು ಎಂಟನೆಯವನು. ಅವನು ಆ ಏಳು ಜನರಲ್ಲಿ ಸೇರಿದವನಾಗಿದ್ದು, ವಿನಾಶಕ್ಕೆ ಹೋಗುತ್ತಿದ್ದಾನೆ.</verse>
				<verse number="12">“ನೀನು ಕಂಡ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ಒಂದು ಗಳಿಗೆಯವರೆಗೆ ಮೃಗದೊಂದಿಗೆ ಅಧಿಕಾರ ಹೊಂದುವವು.</verse>
				<verse number="13">ಅವರು ಏಕ ಮನಸ್ಸುಳ್ಳವರಾಗಿ, ಮೃಗಕ್ಕೆ ತಮ್ಮ ಬಲ ಮತ್ತು ಅಧಿಕಾರವನ್ನು ಕೊಡುವರು.</verse>
				<verse number="14">ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”</verse>
				<verse number="15">ಅನಂತರ ದೂತನು ನನಗೆ, “ಜಾರಸ್ತ್ರೀ ಕೂತಿದ್ದ ಕಡೆ ನೀನು ಕಂಡ ನೀರುಗಳು, ಪ್ರಜೆಗಳನ್ನೂ ಸಮೂಹಗಳನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತವೆ.</verse>
				<verse number="16">ನೀನು ಕಂಡ ಆ ಮೃಗ ಮತ್ತು ಹತ್ತು ಕೊಂಬುಗಳು ಆ ಜಾರಸ್ತ್ರೀಯನ್ನು ದ್ವೇಷಿಸಿ, ಆಕೆಯನ್ನು ಗತಿಯಿಲ್ಲದವಳನ್ನಾಗಿಯೂ ಆಕೆಯನ್ನು ಬಟ್ಟೆ ಇಲ್ಲದವಳನ್ನಾಗಿಯೂ ಆಕೆಯ ಮಾಂಸವನ್ನು ತಿಂದು, ಆಕೆಯನ್ನು ಬೆಂಕಿಯಲ್ಲಿ ಸುಟ್ಟುಬಿಡುವವು.</verse>
				<verse number="17">ಏಕೆಂದರೆ, ದೇವರು ತಮ್ಮ ಮನಸ್ಸಿನಲ್ಲಿರುವುದನ್ನು ನಡೆಸುವಂತೆಯೂ ಅವುಗಳ ರಾಜ್ಯವನ್ನು ಮೃಗಕ್ಕೆ ಕೊಡಲು ಒಮ್ಮನಸ್ಸಾಗಿರುವಂತೆಯೂ ಮಾಡಿ, ದೇವರು ತಮ್ಮ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಇದನ್ನು ಅವುಗಳ ಹೃದಯದಲ್ಲಿಟ್ಟಿದ್ದಾರೆ.</verse>
				<verse number="18">ನೀನು ಕಂಡ ಆ ಸ್ತ್ರೀಯು ಭೂರಾಜರನ್ನು ಆಳುವ ಮಹಾನಗರಿಯೇ,” ಎಂದು ಹೇಳಿದನು.</verse>
			</chapter>
			<chapter number="18">
				<verse number="1">ಇದಾದನಂತರ ಮಹಾ ಅಧಿಕಾರವುಳ್ಳ ಮತ್ತೊಬ್ಬ ದೂತನು ಪರಲೋಕದಿಂದ ಕೆಳಗೆ ಇಳಿದು ಬರುವುದನ್ನು ಕಂಡೆನು. ಅವನ ತೇಜಸ್ಸಿನಿಂದ ಭೂಮಿಯು ಬೆಳಗಿತು.</verse>
				<verse number="2">ಅವನು ಮಹಾಧ್ವನಿಯಿಂದ: “ ‘ಬಿದ್ದಳು! ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ದೆವ್ವಗಳಿಗೆ ವಾಸಸ್ಥಾನವೂ ಎಲ್ಲಾ ದುರಾತ್ಮಗಳಿಗೂ ಅಶುದ್ಧವಾದ ಹಾಗೂ ಅಸಹ್ಯವಾದ ಪ್ರತಿಯೊಂದು ಪ್ರಾಣಿಪಕ್ಷಿಗಳಿಗೂ ನಿವಾಸವಾಗಿದ್ದಾಳೆ.</verse>
				<verse number="3">ಏಕೆಂದರೆ ಎಲ್ಲಾ ದೇಶಗಳೂ ಆಕೆಯ ಜಾರತ್ವಗಳೆಂಬ ಅತ್ಯಾಸಕ್ತಿಯ ದ್ರಾಕ್ಷಾರಸವನ್ನು ಕುಡಿದಿವೆ. ಭೂಲೋಕದ ಅರಸರು ಆಕೆಯೊಂದಿಗೆ ವ್ಯಭಿಚಾರ ಮಾಡಿದರು, ಭೂಲೋಕದ ವರ್ತಕರು ಆಕೆಯ ಭೋಗ ವಸ್ತುಗಳಿಂದ ಸಿರಿವಂತರಾದರು,” ಎಂದು ಕೂಗಿದನು.</verse>
				<verse number="4">ಅನಂತರ ಪರಲೋಕದಿಂದ ಇನ್ನೊಂದು ಧ್ವನಿಯು: “ ‘ನನ್ನ ಜನರೇ, ಆಕೆಯನ್ನು ಬಿಟ್ಟು ಬನ್ನಿರಿ, ನೀವು ಆಕೆಯ ಪಾಪಗಳಲ್ಲಿ ಪಾಲುಗಾರರಾಗಬಾರದು, ಆಕೆಯ ಉಪದ್ರವಗಳಿಗೆ ಗುರಿಯಾಗಬಾರದು.’</verse>
				<verse number="5">ಏಕೆಂದರೆ ಆಕೆಯ ಪಾಪಗಳು ಒಂದಕ್ಕೊಂದು ಸೇರಿ ಆಕಾಶದಷ್ಟಾಗಿವೆ. ದೇವರು ಆಕೆಯ ಅಪರಾಧಗಳನ್ನು ಜ್ಞಾಪಿಸಿಕೊಂಡಿದ್ದಾರೆ.</verse>
				<verse number="6">ಆಕೆಯು ನಿಮಗೆ ಕೊಟ್ಟಿದ್ದಕ್ಕೆ ಸರಿಯಾಗಿ ಹಿಂದಕ್ಕೆ ಕೊಡಿರಿ. ಕೃತ್ಯಗಳಿಗೆ ಸರಿಯಾಗಿ ಎರಡರಷ್ಟು ಅವಳಿಗೆ ಕೊಡಿರಿ. ಆಕೆಯ ಬಟ್ಟಲಿನಿಂದಲೇ ಎರಡರಷ್ಟು ಆಕೆಗೆ ಕಲಸಿ ಕೊಡಿರಿ.</verse>
				<verse number="7">ಆಕೆಯು ಯಾವುದರಿಂದ ತನ್ನನ್ನು ಘನಪಡಿಸಿಕೊಂಡು ಭೋಗಿನಿಯಾಗಿದ್ದಳೋ ಅದಕ್ಕೆ ತಕ್ಕಂತೆ ನೀವು ಆಕೆಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ. ಏಕೆಂದರೆ ಆಕೆ ತನ್ನ ಹೃದಯದಲ್ಲಿ, ‘ನಾನು ರಾಣಿಯಾಗಿ ಕುಳಿತುಕೊಂಡಿದ್ದೇನೆ. ನಾನು ವಿಧವೆಯಲ್ಲ, ಎಂದೆಂದಿಗೂ ದುಃಖಿಸುವುದಿಲ್ಲ!’ ಎಂದುಕೊಳ್ಳುತ್ತಾಳೆ.</verse>
				<verse number="8">ಆದ್ದರಿಂದ ಒಂದೇ ದಿನದಲ್ಲಿ ಆಕೆಯ ಉಪದ್ರವಗಳಾಗಿರುವ ಮರಣ, ಗೋಳಾಟ ಮತ್ತು ಕ್ಷಾಮವು ಬರುವುವು. ಆಕೆಯನ್ನು ತೀರ್ಪುಮಾಡುವ ಕರ್ತದೇವರು ಶಕ್ತರಾಗಿರುವುದರಿಂದ ಆಕೆಯು ಬೆಂಕಿಯಿಂದ ನಾಶವಾಗುವಳು.”</verse>
				<verse number="9">“ಆಕೆಯೊಂದಿಗೆ ಜಾರತ್ವ ಮಾಡಿರುವ ಭೂರಾಜರು, ಆಕೆಯ ದಹನದಿಂದ ಏರುವ ಹೊಗೆಯನ್ನು ಕಂಡಾಗೆಲ್ಲಾ ಆಕೆಗಾಗಿ ಅಳುತ್ತಾ ಗೋಳಾಡುವರು.</verse>
				<verse number="10">ಆಕೆಯ ಯಾತನೆಯ ದೆಸೆಯಿಂದ ಹೆದರಿ, ದೂರದಲ್ಲಿ ನಿಂತು: “ ‘ಅಯ್ಯೋ! ಅಯ್ಯೋ! ಮಹಾನಗರಿಯೇ, ಬಲಿಷ್ಠನಗರಿ ಬಾಬಿಲೋನೇ! ಒಂದೇ ತಾಸಿನಲ್ಲಿ ನಿನಗೆ ತೀರ್ಪಾಯಿತಲ್ಲಾ?’ ಎಂದು ಶೋಕಿಸುವರು.</verse>
				<verse number="11">“ಭೂಮಿಯ ವರ್ತಕರು ಆಕೆಗಾಗಿ ದುಃಖಿಸಿ ಗೋಳಾಡುತ್ತಾ ತಮ್ಮ ಸರಕು ಸಾಮಗ್ರಿಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ದುಃಖಿಸುವರು.</verse>
				<verse number="12">ಅವರ ಸರಕುಗಳಾದ ಚಿನ್ನ, ಬೆಳ್ಳಿ, ಬೆಲೆಬಾಳುವ ಕಲ್ಲು ಹಾಗೂ ಮುತ್ತುಗಳು, ನಯವಾದ ನಾರುಮಡಿ, ಕಡುಗೆಂಪು ವಸ್ತ್ರ, ರೇಷ್ಮೆ, ಊದಾವರ್ಣದ ವಸ್ತ್ರ, ಅಗಿಲು ಮರ ಮತ್ತು ದಂತ ಪಾತ್ರೆಗಳು, ಬೆಲೆಬಾಳುವ ಮರ, ತಾಮ್ರ, ಕಬ್ಬಿಣ ಮತ್ತು ಚಂದ್ರಕಾಂತ ಶಿಲೆ,</verse>
				<verse number="13">ಸರಕುಗಳಾದ ದಾಲ್ಚಿನ್ನಿ ಮತ್ತು ಮಸಾಲೆ, ಧೂಪ, ಸುಗಂಧ ತೈಲ, ರಕ್ತಬೋಳ, ದ್ರಾಕ್ಷಾರಸ ಮತ್ತು ಓಲಿವ್ ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು ಮತ್ತು ಕುರಿಗಳು, ಕುದುರೆಗಳು, ವಾಹನಗಳು, ಗುಲಾಮರು ಹಾಗೂ ಮನುಷ್ಯರು ಇವುಗಳನ್ನೆಲ್ಲಾ ಆ ವರ್ತಕರು ಅವಳಿಗೆ ಮಾರುತ್ತಿದ್ದರು.</verse>
				<verse number="14">“ನೀನು ಬಯಸಿದ ನಿನ್ನ ಪ್ರಾಣ ಫಲವು ನಿನ್ನಿಂದ ತೊಲಗಿಹೋಗಿದೆ. ನಿನ್ನ ಎಲ್ಲಾ ವೈಭವವು ಹಾಗೂ ನಿನ್ನ ಶೋಭೆಯ ಸೊಗಸುಗಳೆಲ್ಲಾ ನಿನ್ನಿಂದ ನಾಶವಾದವು. ಅವರು ಅವುಗಳನ್ನು ಇನ್ನೆಂದೂ ಕಾಣಲಾರರು.</verse>
				<verse number="15">ಆಕೆಯಿಂದ ಸಿರಿವಂತರಾದ ಆ ಸರಕುಗಳ ವರ್ತಕರು ದೂರದಲ್ಲಿ ನಿಂತು ಆಕೆಯ ಯಾತನೆಯ ದೆಸೆಯಿಂದ ಭಯಪಟ್ಟು, ದುಃಖಿಸಿ,</verse>
				<verse number="16">“ ‘ಅಯ್ಯೋ! ಅಯ್ಯೋ! ಶೋಕಭರಿತ ಮಹಾನಗರಿಯೇ, ನೀನು ನೇರಳೆ, ಕಡುಗೆಂಪು ನಾರುಮಡಿಯನ್ನು ಧರಿಸಿ, ಚಿನ್ನ, ಬೆಲೆಬಾಳುವ ಕಲ್ಲು ಮತ್ತು ಮುತ್ತುಗಳಿಂದ ಬೆಳಗುತ್ತಿದ್ದೆ.</verse>
				<verse number="17">ಒಂದೇ ತಾಸಿನಲ್ಲಿ ಅಂಥ ಮಹಾ ಐಶ್ವರ್ಯವು ನಾಶವಾಗಿ ಹೋಯಿತಲ್ಲಾ?’ ” ಎಂದು ಗೋಳಾಡುವರು. “ಪ್ರತಿಯೊಂದು ಹಡಗಿನ ಮಾಲೀಕರು ಮತ್ತು ಹಡಗು ಪಯಣಿಗರು, ನಾವಿಕರು ಮತ್ತು ಸಮುದ್ರದಿಂದ ತಮ್ಮ ಜೀವನೋಪಾಯ ಮಾಡುವವರೆಲ್ಲರೂ ದೂರದಲ್ಲಿ ನಿಂತು</verse>
				<verse number="18">ಆಕೆಯ ದಹನದ ಹೊಗೆಯನ್ನು ನೋಡಿ, ‘ಈ ಮಹಾಪಟ್ಟಣಕ್ಕೆ ಸಮಾನವಾದದ್ದು ಯಾವುದು?’ ಎಂದು ಕೂಗುವರು.</verse>
				<verse number="19">ಆಗ ಅವರು ತಮ್ಮ ತಲೆಯ ಮೇಲೆ ಧೂಳನ್ನು ಸುರಿದುಕೊಂಡು ಅಳುತ್ತಾ ದುಃಖಿಸುತ್ತಾ ಹೀಗೆ ಕೂಗುವರು: “ ‘ಅಯ್ಯೋ! ಅಯ್ಯೋ! ದುಃಖಭರಿತ ಮಹಾನಗರಿಯೇ, ಸಮುದ್ರದ ಮೇಲೆ ಹಡಗುಗಳನ್ನು ಹೊಂದಿದವರೆಲ್ಲರೂ ಆಕೆಯ ವೈಭವದಿಂದಲೇ ಐಶ್ವರ್ಯವಂತರಾದರಲ್ಲಾ! ಒಂದು ತಾಸಿನಲ್ಲಿ ಆಕೆ ಹಾಳಾದಳಲ್ಲಾ?’</verse>
				<verse number="20">“ಪರಲೋಕವೇ ಸಂಭ್ರಮಿಸಿರಿ, ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ ಆಕೆಯ ನಿಮಿತ್ತ ಹರ್ಷಗೊಳ್ಳಿರಿ! ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ ದೇವರು ಆಕೆಗೆ ತೀರ್ಪುಮಾಡಿದ್ದಾರೆ!”</verse>
				<verse number="21">ಅನಂತರ ಒಬ್ಬ ಬಲಿಷ್ಠನಾದ ದೂತನು, ಬೀಸುವ ಕಲ್ಲಿನಷ್ಟಿರುವ ದೊಡ್ಡ ಕಲ್ಲೊಂದನ್ನು ತೆಗೆದುಕೊಂಡು ಅದನ್ನು ಸಮುದ್ರದೊಳಗೆ ಬಿಸಾಡಿ: “ಮಹಾನಗರಿಯಾದ ಬಾಬಿಲೋನ್ ಹೀಗೆಯೇ ಬಲಾತ್ಕಾರದಿಂದ ಕೆಡವಲಾಗಿ ಎಂದಿಗೂ ಕಾಣಿಸದು.</verse>
				<verse number="22">ಬಾಬಿಲೋನೇ, ನಿನ್ನಲ್ಲಿ ಮತ್ತೆ ತಂತಿವಾದ್ಯ ನುಡಿಸುವವರು, ಸಂಗೀತಗಾರರು, ಕೊಳಲೂದುವವರು, ತುತೂರಿಯವರು, ಮಾಡುವ ಧ್ವನಿ ಎಂದೂ ಕೇಳಿಸದು. ಯಾವುದೇ ವಿಧವಾದ ಕಸಬುಗಾರನೂ ನಿನ್ನಲ್ಲಿ ಎಂದೂ ಕಂಡುಬಾರನು. ಬೀಸುವ ಕಲ್ಲಿನ ಶಬ್ದವು, ನಿನ್ನಲ್ಲಿ ಎಂದೂ ಕೇಳಿಸದು.</verse>
				<verse number="23">ದೀಪದ ಬೆಳಕು ನಿನ್ನಲ್ಲಿ ಎಂದೂ ಪ್ರಕಾಶಿಸದು. ವಧೂವರರ ಸ್ವರವು ಮತ್ತೆ ನಿನ್ನಲ್ಲಿ ಎಂದೂ ಕೇಳಿಬರದು. ಏಕೆಂದರೆ ನಿನ್ನ ವರ್ತಕರು ಭೂಮಿಯ ಮಹಾ ಪುರುಷರಾಗಿದ್ದು, ನಿನ್ನ ಮಾಂತ್ರಿಕ ಶಕ್ತಿಯ ದೆಸೆಯಿಂದ ಎಲ್ಲಾ ದೇಶಗಳವರು ವಂಚಿತರಾದರು.</verse>
				<verse number="24">ಆಕೆಯಲ್ಲಿ ಪ್ರವಾದಿಗಳ ಮತ್ತು ಪರಿಶುದ್ಧರ ರಕ್ತವೂ ಮತ್ತು ಭೂಮಿಯ ಮೇಲೆ ಕೊಲೆಯಾದವರ ರಕ್ತವೂ ಸಿಕ್ಕಿತು,” ಎಂದು ಹೇಳಿದನು.</verse>
			</chapter>
			<chapter number="19">
				<verse number="1">ಇವುಗಳಾದ ಮೇಲೆ ಪರಲೋಕದಲ್ಲಿ ದೊಡ್ಡ ಸಮೂಹದ ಮಹಾಸ್ವರವನ್ನು ಕೇಳಿದೆನು. ಅವರು: “ಹಲ್ಲೆಲೂಯಾ! ರಕ್ಷಣೆಯೂ ಮಹಿಮೆಯೂ ಶಕ್ತಿಯೂ ನಮ್ಮ ದೇವರದಾಗಿವೆ!</verse>
				<verse number="2">ಏಕೆಂದರೆ ದೇವರ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ಏಕೆಂದರೆ ತನ್ನ ಅನೈತಿಕತೆಯಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ದೇವರು ನ್ಯಾಯತೀರಿಸಿ, ಆಕೆಯು ದೇವರ ದಾಸರನ್ನು ಹಿಂಸಿಸಿ, ಚೆಲ್ಲಿಸಿದ ರಕ್ತಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾರೆ.”</verse>
				<verse number="3">ಎಂದೂ ದ್ವಿತೀಯ ಬಾರಿ: “ಹಲ್ಲೆಲೂಯಾ! ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತದೆ!” ಎಂದು ಘೋಷಿಸಿದರು.</verse>
				<verse number="4">ಆಗ ಇಪ್ಪತ್ನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು, ಸಿಂಹಾಸನದ ಮೇಲೆ ಕುಳಿತಿರುವ ದೇವರನ್ನು ಆರಾಧಿಸಿ: “ಆಮೆನ್, ಹಲ್ಲೆಲೂಯಾ!” ಎಂದರು.</verse>
				<verse number="5">ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಸ್ವರವು: “ದೇವರ ಎಲ್ಲಾ ದಾಸರೇ, ದೇವರಿಗೆ ಭಯಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಸ್ತುತಿಸಿರಿ!” ಎಂದು ಹೇಳಿತು.</verse>
				<verse number="6">ತರುವಾಯ ಜನರ ದೊಡ್ಡ ಗುಂಪಿನ ಶಬ್ದವನ್ನು ಕೇಳಿದೆನು. ಅದು ಹೀಗೆ ಹೇಳಿತು: “ಹಲ್ಲೆಲೂಯಾ! ಸರ್ವಶಕ್ತ ಆಗಿರುವ ನಮ್ಮ ಕರ್ತದೇವರು ಆಳುತ್ತಾರೆ.</verse>
				<verse number="7">ಕುರಿಮರಿ ಆಗಿರುವವರ ವಿವಾಹ ಕಾಲವು ಬಂತು. ಅವರಿಗೆ ವಿವಾಹವಾಗುವ ಕನ್ಯೆ ತನ್ನನ್ನು ಸಿದ್ಧಮಾಡಿಕೊಂಡಿದ್ದಾಳೆ. ಸಂತೋಷಪಡೋಣ, ಹರ್ಷಗೊಳ್ಳೋಣ, ಅವರನ್ನು ಮಹಿಮೆಪಡಿಸೋಣ!”</verse>
				<verse number="8">ಪ್ರಕಾಶಮಾನವೂ ನಿರ್ಮಲವೂ ಆದ ನಯವಾದ ನಾರುಮಡಿಯನ್ನು ತೊಟ್ಟುಕೊಳ್ಳುವುದಕ್ಕೆ ಆಕೆಗೆ ಅನುಗ್ರಹಿಸಲಾಗಿತ್ತು. ಏಕೆಂದರೆ ಆ ನಾರುಮಡಿಯು ಪರಿಶುದ್ಧರ ನೀತಿಕೃತ್ಯಗಳೇ.</verse>
				<verse number="9">ಇದಲ್ಲದೆ ಅವನು ನನಗೆ, “ಕುರಿಮರಿ ಆಗಿರುವವರ ವಿವಾಹದ ಔತಣಕ್ಕೆ ಕರೆಯಲಾದವರು ಧನ್ಯರು ಮತ್ತು ಅವರು ಹೀಗೆ ಹೇಳಿದರು, ದೇವರ ಈ ಮಾತುಗಳು ಸತ್ಯವಾಗಿವೆ!” ಎಂದನು.</verse>
				<verse number="10">ಆಗ ನಾನು ಅವನನ್ನು ಆರಾಧಿಸಬೇಕೆಂದು ಅವನ ಪಾದಗಳಿಗೆ ಬೀಳಲು ಅವನು, “ಹಾಗೆ ಮಾಡಬೇಡ, ನಾನು ನಿನಗೂ ಯೇಸುವಿನ ಸಾಕ್ಷಿಯುಳ್ಳ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು. ಏಕೆಂದರೆ ಯೇಸುವಿನ ಸಾಕ್ಷಿಯೇ ಪ್ರವಾದನೆಯ ಆತ್ಮವಾಗಿದೆ!” ಎಂದನು.</verse>
				<verse number="11">ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಇಗೋ, ಬಿಳಿಯ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವರ ಹೆಸರು, ನಂಬಿಗಸ್ತರು ಮತ್ತು ಸತ್ಯವಂತರು ಎಂಬುದು. ಅವರ ನೀತಿಯಿಂದ ನ್ಯಾಯವಿಚಾರಿಸುತ್ತಾ ಯುದ್ಧಮಾಡುತ್ತಾರೆ.</verse>
				<verse number="12">ಆತನ ನೇತ್ರಗಳು ಬೆಂಕಿಯ ಜ್ವಾಲೆಯಂತಿದ್ದವು. ಆತನ ತಲೆಯ ಮೇಲೆ ಅನೇಕ ಮುಕುಟಗಳಿದ್ದವು. ಆತನಿಗೆ ಒಂದು ಹೆಸರು ಬರೆದು ಕೊಟ್ಟಿದೆ. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿಯದು.</verse>
				<verse number="13">ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದಾನೆ. ಆತನ ಹೆಸರು ದೇವರ ವಾಕ್ಯವೆಂಬುದೇ.</verse>
				<verse number="14">ಪರಲೋಕದ ಸೈನ್ಯದವರು ಶುಭ್ರ ಹಾಗೂ ಬಿಳಿಯ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳಿಯ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದರು.</verse>
				<verse number="15">ರಾಷ್ಟ್ರಗಳನ್ನು ಹೊಡೆಯಲು ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. “ಆತನು ಕಬ್ಬಿಣದ ದಂಡದಿಂದ ಅವರನ್ನು ಪಾಲಿಸುವನು.” ಆತನು ಸರ್ವಶಕ್ತ ಆಗಿರುವ ದೇವರ ಉಗ್ರಕೋಪವೆಂಬ ದ್ರಾಕ್ಷಿಯ ತೊಟ್ಟಿಯಲ್ಲಿರುವುದನ್ನು ತುಳಿಯುತ್ತಾನೆ.</verse>
				<verse number="16">ಆತನ ತೊಡೆಯ ಮೇಲಣ ವಸ್ತ್ರದಲ್ಲಿ: ರಾಜಾಧಿರಾಜನೂ ಕರ್ತರ ಕರ್ತನೂ. ಎಂಬ ಹೆಸರು ಬರೆದಿದೆ.</verse>
				<verse number="17">ಆಮೇಲೆ ಒಬ್ಬ ದೂತನು ಸೂರ್ಯನಲ್ಲಿ ನಿಂತಿರುವುದನ್ನು ಕಂಡೆನು. ಅವನು ಮಹಾಧ್ವನಿಯಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ, “ಬನ್ನಿರಿ, ದೇವರು ಏರ್ಪಡಿಸುವ ಮಹಾಭೋಜನಕ್ಕೆ ಕೂಡಿಬನ್ನಿರಿ.</verse>
				<verse number="18">ರಾಜರು, ಸಹಸ್ರಾಧಿಪತಿಗಳು, ಪರಾಕ್ರಮಶಾಲಿಗಳು, ಅಶ್ವಗಳು, ಅಶ್ವಾರೂಢರು, ಸ್ವತಂತ್ರರು, ದಾಸರು, ದೊಡ್ಡವರು, ಚಿಕ್ಕವರು, ಇವರೆಲ್ಲರ ಮಾಂಸವನ್ನು ತಿನ್ನುವುದಕ್ಕೆ ಬನ್ನಿರಿ!” ಎಂದು ಹೇಳಿದನು.</verse>
				<verse number="19">ತರುವಾಯ ಆ ಮೊದಲನೆಯ ಮೃಗವೂ ಭೂರಾಜರೂ ಅವರ ಸೈನ್ಯಗಳವರೂ ಆ ಕುದುರೆಯ ಮೇಲೆ ಕುಳಿತಿದ್ದವರ ಮೇಲೆಯೂ ಅವರ ಸೈನ್ಯದ ಮೇಲೆಯೂ ಯುದ್ಧಮಾಡುವುದಕ್ಕಾಗಿ ಕೂಡಿ ಬಂದಿರುವುದನ್ನು ನಾನು ಕಂಡೆನು.</verse>
				<verse number="20">ಆಗ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹವನ್ನು ಆರಾಧಿಸಿದವರನ್ನೂ ಮರುಳುಗೊಳಿಸಿದ ಸುಳ್ಳು ಪ್ರವಾದಿ ಸಹ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲಾಯಿತು.</verse>
				<verse number="21">ಉಳಿದವರು ಆ ಕುದುರೆಯ ಮೇಲೆ ಕುಳಿತಿದ್ದವನ ಬಾಯಿಂದ ಬಂದ ಕತ್ತಿಯಿಂದ ಹತರಾದರು ಮತ್ತು ಪಕ್ಷಿಗಳೆಲ್ಲಾ ಅವರ ಮಾಂಸದಿಂದ ಹೊಟ್ಟೆ ತುಂಬಿಸಿಕೊಂಡವು.</verse>
			</chapter>
			<chapter number="20">
				<verse number="1">ಆಗ ಒಬ್ಬ ದೂತನು ಅಧೋಲೋಕದ ಬೀಗದ ಕೈಯನ್ನೂ ದೊಡ್ಡಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು.</verse>
				<verse number="2">ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.</verse>
				<verse number="3">ಆ ಸಾವಿರ ವರ್ಷ ತೀರುವ ತನಕ ಅವನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೂತನು ಅವನನ್ನು ಅಧೋಲೋಕದಲ್ಲಿ ತಳ್ಳಿ, ಬಾಗಿಲು ಮುಚ್ಚಿ ಅದಕ್ಕೆ ಮುದ್ರೆ ಹಾಕಿದನು. ಇವುಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆಯಾಗತಕ್ಕದ್ದು.</verse>
				<verse number="4">ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು.</verse>
				<verse number="5">ಉಳಿದ ಸತ್ತವರು ಆ ಸಾವಿರ ವರ್ಷ ಗತಿಸುವ ತನಕ ಜೀವಿತರಾಗಲಿಲ್ಲ. ಇದೇ ಪ್ರಥಮ ಪುನರುತ್ಥಾನವು.</verse>
				<verse number="6">ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಧನ್ಯರೂ ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಯೇಸುಕ್ರಿಸ್ತರೊಂದಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷಗಳ ಕಾಲ ಆಳುವರು.</verse>
				<verse number="7">ಆ ಸಾವಿರ ವರ್ಷಗಳು ಗತಿಸಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವುದು.</verse>
				<verse number="8">ಅವನು ಹೊರಗೆ ಬಂದು ಭೂಮಿಯ ನಾಲ್ಕುದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ರಾಷ್ಟ್ರಗಳನ್ನು ಮೋಸಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು. ಅವರ ಸಂಖ್ಯೆಯು ಸಮುದ್ರತೀರದ ಮರಳಿನಷ್ಟಿರುವುದು.</verse>
				<verse number="9">ಅವರು ದೇಶದಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ಪರಲೋಕದಿಂದ ಬೆಂಕಿ ಬಿದ್ದು ಅವರನ್ನು ದಹಿಸಿಬಿಟ್ಟಿತು.</verse>
				<verse number="10">ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲಾಯಿತು. ಅಲ್ಲಿ ಮೃಗವೂ ಸುಳ್ಳು ಪ್ರವಾದಿ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.</verse>
				<verse number="11">ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನು ಕಂಡೆನು. ಅದರ ಮೇಲೆ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ಓಡಿಹೋಗಿ ಸ್ಥಳ ಕಾಣಿಸದಂತಾದವು.</verse>
				<verse number="12">ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.</verse>
				<verse number="13">ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವು, ಪಾತಾಳವು ತಮ್ಮಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕ್ರಿಯೆಗಳ ಪ್ರಕಾರ ನ್ಯಾಯತೀರ್ಪಾಯಿತು.</verse>
				<verse number="14">ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲಾದವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.</verse>
				<verse number="15">ಯಾರ ಹೆಸರು ಜೀವ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವರನ್ನು ಬೆಂಕಿಯ ಕೆರೆಗೆ ದೊಬ್ಬಲಾಯಿತು.</verse>
			</chapter>
			<chapter number="21">
				<verse number="1">ತರುವಾಯ, “ನೂತನ ಆಕಾಶವನ್ನೂ ನೂತನ ಭೂಮಿಯನ್ನೂ” ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಇಲ್ಲದಂತಾದವು. ಇನ್ನು ಸಮುದ್ರವು ಇರಲಿಲ್ಲ.</verse>
				<verse number="2">ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ನೂತನ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾದ ವಧುವಿನಂತೆ ಶೃಂಗರಿಸಲಾಗಿತ್ತು.</verse>
				<verse number="3">ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮಾನವರೊಂದಿಗೆ ಇದೆ. ದೇವರು ಅವರೊಡನೆ ವಾಸಮಾಡುವರು. ಮಾನವರು ದೇವರಿಗೆ ಪ್ರಜೆಯಾಗಿರುವರು. ದೇವರು ತಾವೇ ಅವರ ಸಂಗಡ ಇರುವರು.</verse>
				<verse number="4">‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’ ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!” ಎಂದು ಹೇಳಿತು.</verse>
				<verse number="5">ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಇಗೋ, ನಾನು ಎಲ್ಲವನ್ನೂ ನೂತನಗೊಳಿಸುತ್ತೇನೆ!” ಎಂದರು ಮತ್ತು ನನಗೆ, “ನೀನು ಇದನ್ನು ಬರೆ. ಏಕೆಂದರೆ ಈ ಮಾತುಗಳು ನಂಬತಕ್ಕವೂ ಸತ್ಯವಾದವೂ ಆಗಿವೆ!” ಎಂದು ಹೇಳಿದನು.</verse>
				<verse number="6">ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಎಲ್ಲಾ ನೆರವೇರಿತು, ನಾನು ಆದಿಯೂ ಅಂತ್ಯವೂ ಆರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಉಚಿತವಾಗಿ ಕೊಡುವೆನು.</verse>
				<verse number="7">ಜಯಹೊಂದುವವರು ಇವುಗಳಿಗೆ ಬಾಧ್ಯನಾಗುವರು. ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಮಕ್ಕಳಾಗಿರುವರು.</verse>
				<verse number="8">ಆದರೆ ಹೇಡಿಗಳು, ನಂಬದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ, ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು!” ಎಂದು ನನಗೆ ಹೇಳಿದರು.</verse>
				<verse number="9">ಅಂತಿಮ ಏಳು ಉಪದ್ರವಗಳಿಂದ ತುಂಬಿದ ಏಳು ಬೋಗುಣಿಗಳನ್ನು ಹಿಡಿದಿದ್ದ ಏಳುಮಂದಿ ದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತನಾಡುತ್ತಾ, “ಬಾ, ಯಜ್ಞದ ಕುರಿಮರಿಯಾದವವರಿಗೆ ಹೆಂಡತಿಯಾಗತಕ್ಕ ವಧುವನ್ನು ನಿನಗೆ ತೋರಿಸುವೆನು!” ಎಂದು ಹೇಳಿ,</verse>
				<verse number="10">ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ, ಪರಿಶುದ್ಧ ಪಟ್ಟಣವಾದ ಯೆರೂಸಲೇಮು ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದು ಬರುವುದನ್ನು ನನಗೆ ತೋರಿಸಿದನು.</verse>
				<verse number="11">ಅದು ದೇವರ ಮಹಿಮೆಯಿಂದ ಕೂಡಿತ್ತು. ಪಟ್ಟಣದ ಪ್ರಕಾಶವು ಸೂರ್ಯಕಾಂತದಂತೆ ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು. ಅದು ಸ್ವಚ್ಛವಾದ ಸ್ಪಟಿಕದಂತೆ ಕಾಣಿಸಿತು.</verse>
				<verse number="12">ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ ಪುತ್ರರ ಹನ್ನೆರಡು ಕುಲಗಳ ಹೆಸರುಗಳು ಬರೆದಿದ್ದವು.</verse>
				<verse number="13">ಪೂರ್ವದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಪಶ್ಚಿಮ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು ಇದ್ದವು.</verse>
				<verse number="14">ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಕುರಿಮರಿಯಾದವರ ಹನ್ನೆರಡು ಜನ ಅಪೊಸ್ತಲರ ಹೆಸರುಗಳಿದ್ದವು.</verse>
				<verse number="15">ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೆಗೋಲನ್ನು ಹಿಡಿದಿದ್ದನು.</verse>
				<verse number="16">ಆ ಪಟ್ಟಣವು ಚಚ್ಚೌಕವಾಗಿತ್ತು. ಅದರ ಉದ್ದವು, ಅದರ ಅಗಲದಷ್ಟಿತ್ತು. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು. ಅಳತೆಯು 2,200 ಕಿಲೋಮೀಟರ್ ಆಗಿತ್ತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿದ್ದವು.</verse>
				<verse number="17">ಅವನು ಅದರ ಗೋಡೆಯನ್ನೂ ಅಳತೆ ಮಾಡಿದನು. ಅದು 65 ಮೀಟರ್ ಆಗಿತ್ತು. ಮನುಷ್ಯನ ಅಳತೆಯಂತೆ ದೇವದೂತನು ಅಳೆದನು.</verse>
				<verse number="18">ಆ ಗೋಡೆಯು ಸೂರ್ಯಕಾಂತ ಶಿಲೆಯಿಂದ ಕಟ್ಟಲಾಗಿತ್ತು. ಪಟ್ಟಣವು ಶುದ್ಧ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.</verse>
				<verse number="19">ಪಟ್ಟಣದ ಗೋಡೆಯು ಮತ್ತು ಅಸ್ತಿವಾರಗಳು ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತ, ಎರಡನೆಯದು ವೈಡೂರ್ಯ, ಮೂರನೆಯದು ಪಚ್ಚೆ, ನಾಲ್ಕನೆಯದು ಪದ್ಮರಾಗ,</verse>
				<verse number="20">ಐದನೆಯದು ಗೋಮೇಧಿಕ, ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಬತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಇಂದ್ರನೀಲ, ಹನ್ನೆರಡನೆಯದು ನೀಲ ಸ್ಪಟಿಕ.</verse>
				<verse number="21">ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿ ಹೆಬ್ಬಾಗಿಲೂ ಒಂದೊಂದು ಮುತ್ತಿನಿಂದಾಗಿತ್ತು. ಪಟ್ಟಣದ ಮಹಾ ಬೀದಿಯು ಸ್ವಚ್ಛವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.</verse>
				<verse number="22">ಪಟ್ಟಣದಲ್ಲಿ ನಾನು ಆಲಯವನ್ನೇ ಕಾಣಲಿಲ್ಲ. ಏಕೆಂದರೆ ಕರ್ತ ಆಗಿರುವ ಸರ್ವಶಕ್ತ ದೇವರೂ, ಕುರಿಮರಿಯಾಗಿರುವವರೂ ಆಲಯವಾಗಿದ್ದಾರೆ.</verse>
				<verse number="23">ಪಟ್ಟಣವನ್ನು ಬೆಳಗಿಸಲು ಸೂರ್ಯನಾಗಲಿ, ಚಂದ್ರನಾಗಲಿ ಅವಶ್ಯವಿಲ್ಲ. ಏಕೆಂದರೆ ದೇವರ ಮಹಿಮೆಯೇ ಅದಕ್ಕೆ ಬೆಳಕಾಗಿತ್ತು. ಕುರಿಮರಿಯಾದಾತನೇ ಅದರ ದೀಪವು.</verse>
				<verse number="24">ಅದರ ಬೆಳಕಿನಲ್ಲಿ ಎಲ್ಲಾ ಜನರು ನಡೆಯುವರು. ಭೂರಾಜರು ತಮ್ಮ ಮಹಿಮೆಯನ್ನು ಅಲ್ಲಿಗೆ ತರುವರು.</verse>
				<verse number="25">ಅದರ ಹೆಬ್ಬಾಗಿಲುಗಳು ಒಂದು ದಿನವೂ ಮುಚ್ಚುವುದೇ ಇಲ್ಲ. ಇರುಳಂತೂ ಇರುವುದೇ ಇಲ್ಲ.</verse>
				<verse number="26">ಜನಾಂಗಗಳ ಮಹಿಮೆಯೂ ಗೌರವವೂ ಅಲ್ಲಿಗೆ ತರಲಾಗುವವು.</verse>
				<verse number="27">ಅಶುದ್ಧವಾದದ್ದು ಅದರಲ್ಲಿ ಸೇರುವುದಿಲ್ಲ. ಅಸಹ್ಯವಾದದ್ದನ್ನೂ ವಂಚಕವಾದದ್ದನ್ನೂ ನಡೆಸುವವನು ಅದರಲ್ಲಿ ಪ್ರವೇಶಿಸಲಾರನು. ಕುರಿಮರಿಯ ಜೀವ ಪುಸ್ತಕದಲ್ಲಿ ಯಾರ ಯಾರ ಹೆಸರುಗಳು ಬರೆದಿವೆಯೋ ಅವರು ಮಾತ್ರ ಸೇರುವರು.</verse>
			</chapter>
			<chapter number="22">
				<verse number="1">ಆಮೇಲೆ ದೂತನು ಸ್ಪಟಿಕದಂತೆ ಹೊಳೆಯುವ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಕುರಿಮರಿಯಾದವರ ಸಿಂಹಾಸನದಿಂದ ಹೊರಟು,</verse>
				<verse number="2">ಪಟ್ಟಣದ ಪ್ರಧಾನ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲಿ ಜೀವವೃಕ್ಷವಿತ್ತು. ಅದು ಪ್ರತಿ ತಿಂಗಳಿಗೂ ಫಲವನ್ನು ಫಲಿಸುತ್ತಾ ಹನ್ನೆರಡು ಸಾರಿ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವಂಥದ್ದಾಗಿದ್ದವು.</verse>
				<verse number="3">ಇನ್ನು ಯಾವ ಶಾಪವೂ ಇರುವುದಿಲ್ಲ. ಅದರಲ್ಲಿ ದೇವರ ಮತ್ತು ಕುರಿಮರಿಯಾದವರ ಸಿಂಹಾಸನವಿರುವುದು. ದೇವರ ದಾಸರು ಅವರಿಗೆ ಸೇವೆಮಾಡುವರು.</verse>
				<verse number="4">ದೇವರ ಮುಖವನ್ನು ಅವರು ಕಾಣುವರು. ಅವರ ಹಣೆಗಳ ಮೇಲೆ ದೇವರ ಹೆಸರು ಇರುವುದು.</verse>
				<verse number="5">ಇನ್ನು ರಾತ್ರಿ ಇರುವುದಿಲ್ಲ. ದೀಪದ ಬೆಳಕೂ ಸೂರ್ಯನ ಬೆಳಕೂ ಅವಶ್ಯವಿಲ್ಲ. ಕರ್ತದೇವರೇ ಅವರಿಗೆ ಬೆಳಕನ್ನು ಕೊಡುವರು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.</verse>
				<verse number="6">ಆಮೇಲೆ ದೇವದೂತನು ನನಗೆ, “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ!” ಎಂದನು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನು ನೀಡುವ ಕರ್ತದೇವರು ಬೇಗನೆ ಸಂಭವಿಸತಕ್ಕ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿಯೇ ತಮ್ಮ ದೇವದೂತನನ್ನು ಕಳುಹಿಸಿದರು.</verse>
				<verse number="7">ಆಗ, “ಇಗೋ, ಬೇಗನೆ ಬರುತ್ತೇನೆ! ಈ ಗ್ರಂಥದ ಪ್ರವಾದನಾ ವಾಕ್ಯಗಳನ್ನು ಕೈಗೊಂಡು ನಡೆಯುವವರು ಧನ್ಯರು,” ಎಂದು ಕರ್ತ ಆಗಿರುವ ಯೇಸು ಹೇಳಿದರು.</verse>
				<verse number="8">ಯೋಹಾನನೆಂಬ ನಾನೇ, ಈ ಸಂಗತಿಗಳನ್ನು ಕೇಳಿ ಕಂಡವನು. ನಾನು ಕೇಳಿ ಕಂಡಾಗ ಈ ಸಂಗತಿಗಳನ್ನು ನನಗೆ ತೋರಿಸಿದ ದೂತನನ್ನು ಆರಾಧಿಸಬೇಕೆಂದು ಅವನ ಪಾದಕ್ಕೆ ಬಿದ್ದೆನು.</verse>
				<verse number="9">ಅವನು ನನಗೆ, “ನೋಡು, ನೀನು ಹಾಗೆ ಮಾಡಬೇಡ. ನಾನು ನಿನಗೂ ಪ್ರವಾದಿಗಳಾಗಿರುವ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಗೊಳ್ಳುವವರಿಗೂ ಜೊತೆಯ ದಾಸನಾಗಿದ್ದೇನೆ. ದೇವರನ್ನೇ ಆರಾಧಿಸು!” ಎಂದು ಹೇಳಿದನು.</verse>
				<verse number="10">ಇದಲ್ಲದೆ ಅವನು, “ನನಗೆ ಈ ಪುಸ್ತಕದಲ್ಲಿರುವ ಪ್ರವಾದನಾ ವಾಕ್ಯಗಳಿಗೆ ಮುದ್ರೆ ಹಾಕಬೇಡ. ಏಕೆಂದರೆ ಸಮಯವು ಸಮೀಪವಾಗಿದೆ.</verse>
				<verse number="11">ಅನ್ಯಾಯ ಮಾಡುವವನು ಇನ್ನೂ ಅನ್ಯಾಯ ಮಾಡಲಿ, ಮೈಲಿಗೆಯಾದವನು ತನ್ನನ್ನು ಇನ್ನೂ ಮೈಲಿಗೆ ಮಾಡಿಕೊಳ್ಳಲಿ. ನೀತಿವಂತನು ಇನ್ನೂ ನೀತಿಯನ್ನು ಮಾಡಲಿ. ಪವಿತ್ರನು ತನ್ನನ್ನು ಇನ್ನೂ ಪವಿತ್ರ ಮಾಡಿಕೊಳ್ಳಲಿ!” ಎಂದನು.</verse>
				<verse number="12">ಆಗ ಕರ್ತ ಯೇಸು, “ಇಗೋ, ನಾನು ಬೇಗ ಬರುತ್ತೇನೆ. ಪ್ರತಿಯೊಬ್ಬರಿಗೂ ಅವರವರ ಕೆಲಸಕ್ಕೆ ತಕ್ಕಂತೆ ಕೊಡುವ ಪ್ರತಿಫಲವು ನನ್ನಲ್ಲಿದೆ.</verse>
				<verse number="13">ನಾನೇ ಆಲ್ಫಾ ಮತ್ತು ಒಮೆಗಾ, ನಾನೇ ಆದಿಯೂ ಅಂತ್ಯವೂ ಆಗಿದ್ದೇನೆ. ನಾನೇ ಆರಂಭವೂ ಸಮಾಪ್ತಿಯೂ ಆಗಿದ್ದೇನೆ.</verse>
				<verse number="14">“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡವರು ಧನ್ಯರು. ಹೀಗೆ ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ದ್ವಾರಗಳ ಮೂಲಕ ಆ ಪಟ್ಟಣದೊಳಕ್ಕೆ ಸೇರುವರು.</verse>
				<verse number="15">ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.</verse>
				<verse number="16">“ಯೇಸುವೆಂಬ ನಾನು ನಮ್ಮ ಸಭೆಗಳಲ್ಲಿ ಈ ಸಂಗತಿಗಳ ವಿಷಯವಾಗಿ ನಿಮಗೆ ಸಾಕ್ಷಿ ನೀಡುವಂತೆ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ವಂಶದ ಕುಡಿ, ಅವನ ಸಂತತಿಯೂ ಉದಯದ ಪ್ರಕಾಶಮಾನ ತಾರೆಯೂ ಆಗಿದ್ದೇನೆ!” ಎಂದರು.</verse>
				<verse number="17">ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.</verse>
				<verse number="18">ಈ ಗ್ರಂಥದ ಪ್ರವಾದನೆಯನ್ನು ಕೇಳುವ ಪ್ರತಿಯೊಬ್ಬರಿಗೂ ನಾನು ಸಾಕ್ಷಿ ಕೊಡುವುದೇನೆಂದರೆ: ಯಾರಾದರೂ ಹೆಚ್ಚು ಮಾತುಗಳನ್ನು ಇವುಗಳಿಗೆ ಕೂಡಿಸಿದರೆ, ದೇವರು ಅವರ ಮೇಲೆ ಈ ಗ್ರಂಥದಲ್ಲಿ ಬರೆದಿರುವ ಉಪದ್ರವಗಳನ್ನು ಕೂಡಿಸುವರು.</verse>
				<verse number="19">ಯಾರಾದರೂ ಈ ಪ್ರವಾದನಾ ಗ್ರಂಥದಲ್ಲಿರುವ ಮಾತುಗಳನ್ನು ತೆಗೆದುಬಿಟ್ಟರೆ, ಈ ಗ್ರಂಥದಲ್ಲಿ ಬರೆದಿರುವ ಜೀವವೃಕ್ಷದಲ್ಲಿಯೂ ಪವಿತ್ರ ನಗರದಲ್ಲಿಯೂ ಅವರಿಗೆ ಸಿಗುವ ಪಾಲನ್ನು ದೇವರು ತೆಗೆದುಬಿಡುವರು.</verse>
				<verse number="20">ಈ ವಿಷಯಗಳಲ್ಲಿ ಸಾಕ್ಷಿ ನೀಡುವವರು, “ಹೌದು, ನಾನು ಬೇಗ ಬರುತ್ತೇನೆ!” ಎಂದು ಹೇಳುತ್ತಾರೆ. ಆಮೆನ್. ಕರ್ತ ಯೇಸುವೇ ಬಾ.</verse>
				<verse number="21">ನಮ್ಮ ಕರ್ತ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್!</verse>
			</chapter>
		</book>
	</testament>
</bible>