<?xml version="1.0" encoding="UTF-8"?>
<bible translation="Kannada Bible (KNCL) BSI 2016" status="Kannada C.L. Bible - ಸತ್ಯವೇದವು C.L. Copyright © 2016 by The Bible Society of India Used by permission. All rights reserved worldwide." link="https://www.bible.com/bible/1692/MAT.27.KANCLBSI">
	<testament name="Old">
		<book number="1">
			<chapter number="1">
				<verse number="1">ಆದಿಯಲ್ಲಿ ದೇವರು ಪರಲೋಕ - ಭೂಲೋಕವನ್ನು ಸೃಷ್ಟಿಮಾಡಿದರು.</verse>
				<verse number="2">ಭೂಮಿ ನಿರಾಕಾರವಾಗಿಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕಗ್ಗತ್ತಲು ಕವಿದಿತ್ತು. ದೇವರಾತ್ಮ ಜಲರಾಶಿಯ ಮೇಲೆ ಚಲಿಸುತ್ತಿತ್ತು.</verse>
				<verse number="3">ಆಗ ದೇವರು, “ಬೆಳಕಾಗಲಿ” ಎನ್ನಲು ಬೆಳಕಾಯಿತು.</verse>
				<verse number="4">ದೇವರ ಕಣ್ಣಿಗೆ ಅದು ಚೆನ್ನಾಗಿ ಕಂಡಿತು. ಅವರು ಬೆಳಕನ್ನೂ ಕತ್ತಲೆಯನ್ನೂ ಬೇರೆಬೇರೆ ಮಾಡಿ ಬೆಳಕಿಗೆ ಹಗಲೆಂದೂ ಕತ್ತಲೆಗೆ ಇರುಳೆಂದೂ ಹೆಸರಿಟ್ಟರು.</verse>
				<verse number="5">ಹೀಗೆ ಬೈಗೂ ಬೆಳಗೂ ಆಗಿ ಮೊದಲನೆಯ ದಿನವಾಯಿತು.</verse>
				<verse number="6">ಬಳಿಕ ದೇವರು, “ಜಲರಾಶಿಯ ನಡುವೆ ವಿಸ್ತಾರವಾದ ಒಂದು ಗುಮ್ಮಟವು ಉಂಟಾಗಲಿ, ಅದು ಕೆಳಗಿನ ನೀರನ್ನೂ ಮೇಲಿನ ನೀರನ್ನೂ ಬೇರೆಬೇರೆ ಮಾಡಲಿ,” ಎಂದರು. ಹಾಗೆಯೇ ಆಯಿತು.</verse>
				<verse number="7">ಹೀಗೆ ದೇವರು ವಿಸ್ತಾರವಾದ ಗುಮ್ಮಟವೊಂದನ್ನು ಮಾಡಿ ಕೆಳಗಿದ್ದ ನೀರನ್ನು ಮೇಲಿದ್ದ ನೀರಿನಿಂದ ವಿಂಗಡಿಸಿದರು.</verse>
				<verse number="8">ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟರು. ಹೀಗೆ ಬೈಗೂ ಬೆಳಗೂ ಆಗಿ ಎರಡನೆಯ ದಿನ ಆಯಿತು.</verse>
				<verse number="9">ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲ ಒಂದೇ ಸ್ಥಳದಲ್ಲಿ ಕೂಡಿಕೊಳ್ಳಲಿ; ಒಣನೆಲವು ಕಾಣಿಸಿಕೊಳ್ಳಲಿ,” ಎಂದರು. ಹಾಗೆಯೇ ಆಯಿತು.</verse>
				<verse number="10">ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟರು. ದೇವರ ಕಣ್ಣಿಗೆ ಅದೂ ಚೆನ್ನಾಗಿ ಕಂಡಿತು.</verse>
				<verse number="11">ತರುವಾಯ ದೇವರು, “ಭೂಮಿಯಲ್ಲಿ ಸಸ್ಯಗಳನ್ನೂ - ಎಲ್ಲ ತರದ ದವಸಧಾನ್ಯ, ಹಣ್ಣು ಹಂಪಲು ಇವುಗಳನ್ನು ಬಿಡುವ ಗಿಡಮರಬಳ್ಳಿಗಳನ್ನೂ ಬೆಳೆಯಿಸಲಿ,” ಎಂದರು. ಅದು ಹಾಗೆಯೇ ಆಯಿತು.</verse>
				<verse number="12">ಭೂಮಿಯಲ್ಲಿ ಸಸ್ಯಗಳು ಬೆಳೆದವು; ಎಲ್ಲ ತರದ ದವಸಧಾನ್ಯಗಳನ್ನೂ ಹಣ್ಣುಹಂಪಲುಗಳನ್ನೂ ಬಿಡುವ ಗಿಡಮರಬಳ್ಳಿಗಳು ಕಾಣಿಸಿಕೊಂಡವು. ದೇವರ ಕಣ್ಣಿಗೆ ಅವು ಚೆನ್ನಾಗಿ ಕಂಡವು.</verse>
				<verse number="13">ಹೀಗೆ ಬೈಗೂ ಬೆಳಗೂ ಆಗಿ ಮೂರನೆಯ ದಿನವಾಯಿತು.</verse>
				<verse number="14">ಅದಾದನಂತರ ದೇವರು,“ಹಗಲು ಇರುಳುಗಳನ್ನು ಬೇರೆಬೇರೆ ಮಾಡಲು ಋತುಕಾಲಗಳನ್ನೂ ದಿನಸಂವತ್ಸರಗಳನ್ನೂ ಸೂಚಿಸಲು, ಹಾಗು</verse>
				<verse number="15">ಭೂಮಿಗೆ ಬೆಳಕನ್ನೀಯಲು, ಆಕಾಶ ದೀಪಗಳು ಉಂಟಾಗಲಿ,” ಎಂದರು. ಹಾಗೆಯೇ ಆಯಿತು.</verse>
				<verse number="16">ಹಗಲನ್ನಾಳುವುದಕ್ಕೆ ಸೂರ್ಯನನ್ನೂ ಇರುಳನ್ನಾಳುವುದಕ್ಕೆ ಚಂದ್ರನನ್ನೂ, ಹೀಗೆ ಎರಡು ದೀವಿಗೆಗಳನ್ನು ಸೃಷ್ಟಿ ಮಾಡಿದರು. ಅದು ಮಾತ್ರವಲ್ಲ, ನಕ್ಷತ್ರಗಳನ್ನೂ ಅವರು ಸೃಷ್ಟಿಮಾಡಿದರು.</verse>
				<verse number="17">ಆ ದೀವಿಗೆಗಳನ್ನು ಆಕಾಶದಲ್ಲಿ ಇಟ್ಟು ಭೂಮಿಗೆ ಬೆಳಕನ್ನೀಯುವಂತೆ ಮಾಡಿದರು. ಹಾಗೂ</verse>
				<verse number="18">ಹಗಲಿರುಳುಗಳನ್ನು ಆಳುವುದಕ್ಕೂ, ಬೆಳಕನ್ನೂ ಕತ್ತಲನ್ನೂ ಬೇರೆಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದರು. ದೇವರ ಕಣ್ಣಿಗೆ ಅದೂ ಚೆನ್ನಾಗಿ ಕಂಡಿತು.</verse>
				<verse number="19">ಹೀಗೆ ಬೈಗೂ ಬೆಳಗೂ ಆಗಿ ನಾಲ್ಕನೆಯ ದಿನ ಆಯಿತು.</verse>
				<verse number="20">ಆಮೇಲೆ ದೇವರು, “ಹಲವಾರು ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಭೂಮಿ ಆಕಾಶಗಳ ನಡುವೆ ಪಕ್ಷಿಗಳು ಹಾರಾಡಲಿ,” ಎಂದರು.</verse>
				<verse number="21">ಈ ಪ್ರಕಾರ ದೇವರು ದೊಡ್ಡ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ನಾನಾ ವಿಧವಾದ ಜೀವಜಂತುಗಳನ್ನೂ ರೆಕ್ಕೆಗಳುಳ್ಳ ಸಕಲ ವಿಧವಾದ ಪಕ್ಷಿಗಳನ್ನೂ ಸೃಷ್ಟಿಮಾಡಿದರು. ದೇವರ ದೃಷ್ಟಿಗೆ ಅದೂ ಚೆನ್ನಾಗಿ ಕಂಡಿತು.</verse>
				<verse number="22">ಅವುಗಳಿಗೆ ದೇವರು, “ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ,” ಎಂದು ಹೇಳಿ ಆಶೀರ್ವದಿಸಿದರು.</verse>
				<verse number="23">ಹೀಗೆ ಬೈಗೂ ಬೆಳಗೂ ಆಗಿ ಐದನೆಯ ದಿನ ಆಯಿತು.</verse>
				<verse number="24">ಆ ಬಳಿಕ ದೇವರು, “ಭೂಮಿಯಿಂದ ಎಲ್ಲ ತರದ ಜೀವಜಂತುಗಳು ಸೃಷ್ಟಿಯಾಗಲಿ. ದೊಡ್ಡ - ಚಿಕ್ಕ ಸಾಕುಪ್ರಾಣಿಗಳೂ ಕಾಡುಮೃಗಗಳೂ ಹುಟ್ಟಲಿ,“ ಎಂದರು. ಅಂತೆಯೇ ಆಯಿತು.</verse>
				<verse number="25">ಎಲ್ಲ ತರದ ದೊಡ್ಡ - ಚಿಕ್ಕ ಕಾಡುಮೃಗಗಳನ್ನೂ ಸಾಕುಪ್ರಾಣಿಗಳನ್ನೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನು ದೇವರು ಸೃಷ್ಟಿಮಾಡಿದರು. ಅವರ ನೋಟಕ್ಕೆ ಅದು ಚೆನ್ನಾಗಿ ಕಂಡಿತು.</verse>
				<verse number="26">ಅದಾದನಂತರ ದೇವರು, “ನಮ್ಮಂತೆಯೇ ಇರುವ ಹಾಗು ನಮ್ಮನ್ನು ಹೋಲುವ, ಮನುಷ್ಯರನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ - ಚಿಕ್ಕ ಸಾಕುಪ್ರಾಣಿ ಹಾಗು ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ಮೇಲೆಯೂ ದೊರೆತನ ಮಾಡಲಿ,” ಎಂದರು. ಹೀಗೆ ದೇವರು:</verse>
				<verse number="27">ಸೃಷ್ಟಿಸಿದರು ನರರನ್ನು ತಮ್ಮ ಹೋಲಿಕೆಯಲ್ಲಿ ಸೃಷ್ಟಿಸಿದರವರನ್ನು ದೇವಾನುರೂಪದಲ್ಲಿ ಸೃಷ್ಟಿಸಿದರವರನ್ನು ಸ್ತ್ರೀಪುರುಷರನ್ನಾಗಿ.</verse>
				<verse number="28">ಅವರನ್ನು ದೇವರು ಆಶೀರ್ವದಿಸಿ, “ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ.</verse>
				<verse number="29">ಇನ್ನೂ, ಭೂಮಿಯಲ್ಲಿರುವ ಎಲ್ಲ ತರದ ದವಸಧಾನ್ಯಗಳನ್ನೂ ಹಣ್ಣುಹಂಪಲುಗಳನ್ನೂ ನಿಮಗೆ ಆಹಾರವಾಗಿ ಕೊಟ್ಟಿದ್ದೇನೆ.</verse>
				<verse number="30">ಇದಲ್ಲದೆ, ಭೂಮಿಯ ಮೇಲೆ ತಿರುಗಾಡುವ ದೊಡ್ಡ - ಚಿಕ್ಕ ಮೃಗಗಳಿಗೂ ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೂ ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳಿಗೂ ಹುಲ್ಲು ಸೊಪ್ಪುಗಳನ್ನು ಆಹಾರವಾಗಿ ಕೊಟ್ಟಿದ್ದೇನೆ,” ಎಂದು ಹೇಳಿದರು. ಹಾಗೆಯೇ ಆಯಿತು.</verse>
				<verse number="31">ತಾವು ಸೃಷ್ಟಿಸಿದ ಎಲ್ಲವನ್ನು ದೇವರು ನೋಡಿದರು. ಅವೆಲ್ಲವೂ ಬಹಳ ಚೆನ್ನಾಗಿತ್ತು. ಹೀಗೆ ಬೈಗೂ ಬೆಳಗೂ ಆಗಿ ಆರನೆಯ ದಿನ ಆಯಿತು.</verse>
			</chapter>
			<chapter number="2">
				<verse number="1">ಪರಲೋಕ - ಭೂಲೋಕಗಳೂ ಅವುಗಳಲ್ಲಿ ಇರುವ ಸಮಸ್ತವೂ ಹೀಗೆ ನಿರ್ಮಿತವಾದವು.</verse>
				<verse number="2">ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿಬಿಟ್ಟು ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.</verse>
				<verse number="3">ಆ ಏಳನೆಯ ದಿನವು ಪರಿಶುದ್ಧವಾಗಿರಲಿ ಎಂದು ಆಶೀರ್ವದಿಸಿದರು. ತಮ್ಮ ಸೃಷ್ಟಿಕಾರ್ಯವನ್ನೆಲ್ಲ ಮುಗಿಸಿ ಆ ದಿನದಂದು ವಿಶ್ರಮಿಸಿಕೊಂಡ ಕಾರಣ ಹಾಗೆ ಮಾಡಿದರು.</verse>
				<verse number="4">ಇತಿ, ಪರಲೋಕ - ಭೂಲೋಕಗಳ ನಿರ್ಮಾಣ ಚರಿತ್ರೆ.</verse>
				<verse number="5">ದೇವರಾದ ಸರ್ವೇಶ್ವರ ಸ್ವಾಮಿ ಪರಲೋಕ - ಭೂಲೋಕಗಳನ್ನು ಸೃಷ್ಟಿಮಾಡಿದಾಗ ಯಾವ ಗಿಡಗಳೂ ಭೂಮಿಯಲ್ಲಿ ಇರಲಿಲ್ಲ. ಯಾವ ಬೀಜವೂ ಮೊಳೆತಿರಲಿಲ್ಲ. ಏಕೆಂದರೆ ದೇವರಾದ ಸರ್ವೇಶ್ವರ ಭೂಮಿಯ ಮೇಲೆ ಮಳೆಯನ್ನು ಸುರಿಸಿರಲಿಲ್ಲ. ಭೂಮಿಯನ್ನು ವ್ಯವಸಾಯ ಮಾಡಲು ಮನುಷ್ಯನೂ ಇರಲಿಲ್ಲ.</verse>
				<verse number="6">ಆದರೂ ಭೂಮಿಯಿಂದ ನೀರು ಉಕ್ಕಿಬಂದು ನೆಲಕ್ಕೆ ನೀರೆರೆಯುತ್ತಿತ್ತು.</verse>
				<verse number="7">ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು.</verse>
				<verse number="8">ಇದಲ್ಲದೆ, ದೇವರಾದ ಸರ್ವೇಶ್ವರ ಪೂರ್ವದಿಕ್ಕಿನಲ್ಲಿರುವ ಏದೆನ್ ಪ್ರದೇಶದಲ್ಲಿ ಒಂದು ಉದ್ಯಾನವನವನ್ನು ಮಾಡಿ ತಾವು ರೂಪಿಸಿದ ಮನುಷ್ಯನನ್ನು ಅದರಲ್ಲಿ ಇರಿಸಿದರು.</verse>
				<verse number="9">“ನೋಟಕ್ಕೆ ರಮ್ಯವೂ ಊಟಕ್ಕೆ ರುಚಿಕರವೂ ಆದ ನಾನಾ ತರದ ಮರಗಳನ್ನು ದೇವರಾದ ಸರ್ವೇಶ್ವರ ಅಲ್ಲಿ ಬೆಳೆಯ ಮಾಡಿದರು. ಆ ವನದ ಮಧ್ಯದಲ್ಲಿ ಜೀವದಾಯಕ ವೃಕ್ಷವನ್ನು ಹಾಗು ಒಳಿತು - ಕೆಡಕುಗಳ ಅರಿವನ್ನು ಮೂಡಿಸುವ ವೃಕ್ಷವನ್ನು ಬೆಳೆಯಿಸಿದರು.</verse>
				<verse number="10">ಏದೆನ್ ಪ್ರದೇಶದಲ್ಲಿ ಒಂದು ನದಿ ಹುಟ್ಟಿ ಆ ವನಕ್ಕೆ ನೀರೆರೆಯುತ್ತಿತ್ತು. ಅದು ಅಲ್ಲಿಂದ ಹರಿದು ಆಚೆಕಡೆ ನಾಲ್ಕು ಉಪನದಿಗಳಾಗಿ ಕವಲೊಡೆದಿತ್ತು.</verse>
				<verse number="11">ಮೊದಲನೆಯದರ ಹೆಸರು ಪೀಶೋನ್. ಇದು ಬಂಗಾರ ದೊರಕುವ ದೇಶವನ್ನೆಲ್ಲಾ ಸುತ್ತಿ ಹರಿಯುತ್ತದೆ. ಆ ದೇಶದ ಬಂಗಾರ ಅಪ್ಪಟವಾದುದು.</verse>
				<verse number="12">‘ಬದೋಲಖ’ ಎಂಬ ವಿಶೇಷ ಸಾಂಬ್ರಾಣಿ, ‘ಗೋಮೇಧಿಕ’ ಎಂಬ ರತ್ನವೂ ಅಲ್ಲಿ ದೊರಕುತ್ತವೆ.</verse>
				<verse number="13">ಎರಡನೆ ನದಿಯ ಹೆಸರು ಗೀಹೋನ್, ಇದು ಕೂಷ್ ದೇಶವನ್ನೆಲ್ಲಾ ಸುತ್ತುತ್ತದೆ.</verse>
				<verse number="14">ಮೂರನೇ ನದಿಯ ಹೆಸರು ಟೈಗ್ರಿಸ್. ಇದು ಅಸ್ಸೀರಿಯಾ ದೇಶದ ಪೂರ್ವಕ್ಕೆ ಹರಿಯುತ್ತದೆ. ನಾಲ್ಕನೆಯದು ಯೂಫ್ರೆಟಿಸ್ ನದಿ.</verse>
				<verse number="15">ದೇವರಾದ ಸರ್ವೇಶ್ವರ ಆ ಮನುಷ್ಯನನ್ನು ಕರೆದುಕೊಂಡು ಹೋಗಿ ಏದೆನ್ ವನವನ್ನು ಕೃಷಿಮಾಡುವುದಕ್ಕೂ ಕಾಯುವುದಕ್ಕೂ ಅದರಲ್ಲಿ ಬಿಟ್ಟರು.</verse>
				<verse number="16">ಇದಲ್ಲದೆ, ದೇವರಾದ ಸರ್ವೇಶ್ವರ ಆ ಮನುಷ್ಯನಿಗೆ, “ನೀನು ಈ ತೋಟದಲ್ಲಿರುವ ಎಲ್ಲ ಮರಗಳ ಹಣ್ಣುಗಳನ್ನು ಯಥೇಚ್ಛವಾಗಿ ತಿನ್ನಬಹುದು.</verse>
				<verse number="17">ಆದರೆ ಒಳಿತು - ಕೆಡಕುಗಳ ಅರಿವನ್ನು ಹುಟ್ಟಿಸುವ ಮರದ ಹಣ್ಣನ್ನು ಮಾತ್ರ ತಿನ್ನಬಾರದು; ತಿಂದೆಯಾದರೆ, ಅದೇ ದಿನ ಸತ್ತುಹೋಗುವೆ,” ಎಂದು ವಿಧಿಸಿದರು.</verse>
				<verse number="18">ಅನಂತರ ದೇವರಾದ ಸರ್ವೇಶ್ವರ, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ, ಅವನಿಗೆ ಸರಿಬೀಳುವ ಸಹಕಾರಿಯನ್ನು ಸೃಷ್ಟಿಮಾಡುವೆನು,” ಎಂದರು.</verse>
				<verse number="19">ಎಲ್ಲ ಭೂಜಂತುಗಳನ್ನೂ ಆಕಾಶದ ಪಕ್ಷಿಗಳನ್ನೂ ಮಣ್ಣಿನಿಂದ ನಿರ್ಮಿಸಿದ ಅವರು, ಮನುಷ್ಯನು ಇವುಗಳಿಗೆ ಏನೇನು ಹೆಸರಿಡುವನೋ ನೋಡೋಣವೆಂದು ಅವನ ಬಳಿಗೆ ಅವುಗಳನ್ನು ಬರಮಾಡಿದರು. ಆ ಮನುಷ್ಯನು ಒಂದೊಂದು ಪ್ರಾಣಿಗೆ ಯಾವ ಯಾವ ಹೆಸರಿಟ್ಟನೋ ಅದೇ ಅವುಗಳಿಗೆ ಹೆಸರು ಆಯಿತು.</verse>
				<verse number="20">ಹೀಗೆ ಮನುಷ್ಯನು ಎಲ್ಲ ಸಾಕುಪ್ರಾಣಿಗಳಿಗೂ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಹೆಸರಿಟ್ಟನು; ಆದರೆ ಅವನಿಗೆ ಸರಿಬೀಳುವ ಜೊತೆಗಾತಿ ಅವುಗಳಲ್ಲಿ ಕಾಣಿಸಲಿಲ್ಲ.</verse>
				<verse number="21">ಹೀಗಿರುವಲ್ಲಿ ದೇವರಾದ ಸರ್ವೇಶ್ವರ ಆ ಮನುಷ್ಯನಿಗೆ ಗಾಢನಿದ್ರೆಯನ್ನು ಬರಮಾಡಿದರು. ಅವನು ನಿದ್ರಿಸುತ್ತಿರುವಾಗ ಅವನ ಪಕ್ಕೆಯ ಎಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಅದರ ಸ್ಥಳವನ್ನು ಮಾಂಸದಿಂದ ಮುಚ್ಚಿದರು.</verse>
				<verse number="22">ಆ ಎಲುಬನ್ನು ಮಹಿಳೆಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಬರಮಾಡಿದರು.</verse>
				<verse number="23">ಅವನು ಆಕೆಯನ್ನು ನೋಡಿ ಹೀಗೆಂದನು: ಸರಿ, ನನಗೀಗ ಇವಳು ನನ್ನೆಲುಬಿನ ಎಲುಬು ನನ್ನೊಡಲಿನ ಒಡಲು ನರನಿಂದ ಉತ್ಪತ್ತಿಯಾದಿವಳನ್ನು ನಾರಿಯೆಂದೇ ಕರೆವರು.</verse>
				<verse number="24">ಈ ಕಾರಣ, ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಒಡಲಾಗಿ ಬಾಳುವರು.</verse>
				<verse number="25">ಆ ಸ್ತ್ರೀಪುರುಷರಿಬ್ಬರೂ ಬೆತ್ತಲೆ ಆಗಿದ್ದರೂ ನಾಚಿಕೊಳ್ಳಲಿಲ್ಲ.</verse>
			</chapter>
			<chapter number="3">
				<verse number="1">ಸರ್ವೇಶ್ವರನಾದ ದೇವರು ಉಂಟುಮಾಡಿದ ಭೂಜಂತುಗಳಲ್ಲಿ ಅತಿ ಯುಕ್ತಿ ಉಳ್ಳದ್ದು ಸರ್ಪ. ಅದು ಮಹಿಳೆಯ ಬಳಿಗೆ ಬಂದು, “ಏನಮ್ಮಾ, ತೋಟದಲ್ಲಿರುವ ಯಾವ ಮರದ ಹಣ್ಣನ್ನೂ ತಿನ್ನಕೂಡದು ಎಂದು ದೇವರು ಆಜ್ಞೆ ಮಾಡಿರುವುದು ನಿಜವೋ?” ಎಂದು ಕೇಳಿತು.</verse>
				<verse number="2">ಅದಕ್ಕೆ ಆ ಮಹಿಳೆ, “ತೋಟದಲ್ಲಿರುವ ಮರಗಳ ಹಣ್ಣುಗಳನ್ನು ನಾವು ತಿನ್ನಬಹುದು;</verse>
				<verse number="3">ಆದರೆ ಅದರ ನಡುವೆಯಿರುವ ಈ ಮರದ ಹಣ್ಣನ್ನು ಮಾತ್ರ ತಿನ್ನಲೂ ಕೂಡದು, ಮುಟ್ಟಲೂ ಕೂಡದು, ‘ತಿಂದರೆ ಸಾಯುವಿರಿ’ ಎಂದು ದೇವರು ಹೇಳಿದ್ದಾರೆ,” ಎಂದು ಉತ್ತರಕೊಟ್ಟಳು.</verse>
				<verse number="4">ಆಗ ಆ ಸರ್ಪ, “ಆ ಮಾತು ನಿಜವಲ್ಲ, ನೀವು ಸಾಯುವುದು ಸುಳ್ಳು.</verse>
				<verse number="5">ಇದರ ಹಣ್ಣನ್ನು ತಿಂದ ಕೂಡಲೆ ನಿಮ್ಮ ಕಣ್ಣುಗಳು ತೆರೆಯುವುವು, ನೀವು ದೇವರಂತೆ ಆಗಿ ಒಳಿತು - ಕೆಡಕುಗಳನ್ನರಿತ ಜ್ಞಾನಿಗಳು ಆಗಿಬಿಡುವಿರಿ. ಇದು ದೇವರಿಗೆ ಚೆನ್ನಾಗಿ ಗೊತ್ತುಂಟು,” ಎಂದಿತು.</verse>
				<verse number="6">ಆಗ ಆ ಮಹಿಳೆ, “ಈ ಮರದ ಹಣ್ಣು ಊಟಕ್ಕೆ ಎಷ್ಟು ಚೆನ್ನಾಗಿದೆ, ನೋಟಕ್ಕೆ ಎಷ್ಟು ರಮಣೀಯವಾಗಿದೆ. ಜ್ಞಾನಾರ್ಜನೆಗೆ ಎಷ್ಟು ಆಕರ್ಷಣೀಯವಾಗಿದೆ” ಎಂದು ತಿಳಿದು, ಅದನ್ನು ತೆಗೆದುಕೊಂಡು ತಿಂದಳು; ಸಂಗಡವಿದ್ದ ಗಂಡನಿಗೂ ಕೊಟ್ಟಳು; ಅವನೂ ತಿಂದನು.</verse>
				<verse number="7">ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆ ಆಗಿದ್ದೇವೆಂದು ತಿಳಿದು ಅವರು ಅಂಜೂರದ ಎಲೆಗಳನ್ನು ಹೊಲಿದು ಉಟ್ಟುಕೊಂಡರು.</verse>
				<verse number="8">ಅಂದು, ಸಂಜೆಯ ತಂಗಾಳಿಯಲ್ಲಿ, ಸರ್ವೇಶ್ವರನಾದ ದೇವರು ತೋಟದೊಳಗೆ ಸಂಚರಿಸುವ ಸಪ್ಪಳವು ಕೇಳಿಸಿತು. ಅವರಿಗೆ ಕಾಣಿಸಿಕೊಳ್ಳಬಾರದೆಂದು ಆದಾಮನೂ ಹವ್ವಳೂ ಹಿಂದೆ ಅವಿತುಕೊಂಡರು.</verse>
				<verse number="9">ಆದರೆ ಸರ್ವೇಶ್ವರನಾದ ದೇವರು, “ಎಲ್ಲಿರುತ್ತೀಯಾ?” ಎಂದು ಆದಾಮನನ್ನು ಕೂಗಿ ಕೇಳಿದರು.</verse>
				<verse number="10">ಅದಕ್ಕೆ ಅವನು, “ತಾವು ತೋಟದಲ್ಲಿ ಸಂಚರಿಸುವ ಸಪ್ಪಳವು ಕೇಳಿಸಿತು; ಬೆತ್ತಲೆಯಾಗಿದ್ದೇನಲ್ಲಾ ಎಂದು ಹೆದರಿ ಅವಿತುಕೊಂಡೆ,” ಎಂದನು.</verse>
				<verse number="11">“ನೀನು ಬೆತ್ತಲೆಯಾಗಿರುತ್ತಿಯೆಂದು ನಿನಗೆ ತಿಳಿಸಿದವರು ಯಾರು?” ಎಂದು ಕೇಳಿದರು.</verse>
				<verse number="12">ಅದಕ್ಕೆ ಆದಾಮನು, “ನನ್ನ ಜೊತೆಯಲ್ಲಿ ಇರಲು ತಾವು ಕೊಟ್ಟ ಮಹಿಳೆ ಆ ಮರದ ಹಣ್ಣನ್ನು ನನಗೆ ಕೊಟ್ಟಳು; ನಾನು ತಿಂದೆ,” ಎಂದನು</verse>
				<verse number="13">ಸರ್ವೇಶ್ವರನಾದ ದೇವರು ಆ ಮಹಿಳೆಯನ್ನು, “ಇದೇನು ನೀನು ಮಾಡಿದ್ದು?” ಎಂದು ಕೇಳಲು ಆಕೆ, “ಸರ್ಪವು ನನ್ನನ್ನು ವಂಚಿಸಿ ತಿನ್ನುವಂತೆ ಮಾಡಿತು,” ಎಂದು ಉತ್ತರಕೊಟ್ಟಳು.</verse>
				<verse number="14">ಆಗ. ಸರ್ವೇಶ್ವರರಾದ ದೇವರು, ಇಂತೆಂದರು ಸರ್ಪಕ್ಕೆ: “ಈ ಪರಿಯ ಕೃತ್ಯವನ್ನು ನೀನೆಸಗಿದುದರಿಂದ ಶಾಪಗ್ರಸ್ತನಾದೆ ಎಲ್ಲ ಪಶು ಪ್ರಾಣಿಗಳಿಗಿಂತ; ಹರಿದಾಡುವೆ ಹೊಟ್ಟೆಯ ಮೇಲೆ ಇಂದಿನಿಂದ ತಿನ್ನುವೆ ಮಣ್ಣನೆ ಜೀವಮಾನ ಪರಿಯಂತ</verse>
				<verse number="15">ಹಗೆತನವಿರಿಸುವೆನು ನಿನಗೂ ಈ ಮಹಿಳೆಗೂ ನಿನ್ನ ಸಂತಾನಕ್ಕೂ ಇವಳ ಸಂತಾನಕ್ಕೂ ಜಜ್ಜುವುದಿವಳ ಸಂತಾನ ನಿನ್ನ ತಲೆಯನ್ನು ಕಚ್ಚುವೆ ನೀನಾ ಸಂತಾನದ ಹಿಮ್ಮಡಿಯನ್ನು.”</verse>
				<verse number="16">ಬಳಿಕ ಆ ಮಹಿಳೆಗೆ: “ಹೆಚ್ಚಿಸುವೆನು ಪ್ರಸವಕಾಲದ ನಿನ್ನ ವೇದನೆಯನ್ನು ಹೆರುವೆ ನೀನು ಸಂಕಷ್ಟದಿಂದಲೇ ಮಕ್ಕಳನ್ನು. ಆದರೂ ನಿನಗಿರುವುದು ಗಂಡನ ಬಯಕೆ ಒಳಗಾಗುವೆ ನೀನು ಆತನ ಒಡೆತನಕ್ಕೆ.\</verse>
				<verse number="17">ಅನಂತರ ಆದಾಮನಿಗೆ: “ತಿನ್ನಬಾರದೆಂದು ನಾ ವಿಧಿಸಿದ ಮರದ ಹಣ್ಣನ್ನು ತಿಂದೆ ನೀನು, ಕೇಳಿ ನಿನ್ನಾ ಮಡದಿಯ ಮಾತನ್ನು. ಇದಕಾರಣ ಹಾಕಿರುವೆನು ಶಾಪ ಹೊಲನೆಲಕ್ಕೆ ದುಡಿವೆ ನೀನು ಜೀವಮಾನವಿಡೀ ಅದರ ಕೃಷಿಗೆ.</verse>
				<verse number="18">ಬೆಳಸುವುದದು ಅತುಳ ಕಳೆಯನ್ನು, ಮುಳ್ಳುಗಿಡಗಳನ್ನು ತಿನ್ನಬೇಕಾಗುವುದು ನೀನು ಬೈಲಿನ ಬೆಳೆಯನ್ನು.</verse>
				<verse number="19">ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು.\</verse>
				<verse number="20">ಆದಾಮನು ತನ್ನ ಹೆಂಡತಿಗೆ “ಹವ್ವ\ ಎಂದು ಹೆಸರಿಟ್ಟನು. ಏಕೆಂದರೆ ಮಾನವಕುಲಕ್ಕೆ ಮೂಲಮಾತೆ ಆಕೆ.</verse>
				<verse number="21">ಸರ್ವೇಶ್ವರನಾದ ದೇವರು ಆದಾಮನಿಗೂ ಆತನ ಹೆಂಡತಿಗೂ ಚರ್ಮದ ಅಂಗಿಗಳನ್ನು ತೊಡಿಸಿದರು.</verse>
				<verse number="22">ಸರ್ವೇಶ್ವರನಾದ ದೇವರು, “ಮನುಷ್ಯನು ಈಗ ನಮ್ಮಲ್ಲಿ ಒಬ್ಬರಂತೆ ಒಳಿತು - ಕೆಡುಕುಗಳ ಜ್ಞಾನವನ್ನು ಪಡೆದುಬಿಟ್ಟಿದ್ದಾನೆ. ಇನ್ನು ಅಮರ ಜೀವಿಯಾಗಲು ಜೀವವೃಕ್ಷದ ಹಣ್ಣಿಗೆ ಕೈ ಚಾಚಿಬಿಡಬಾರದು,” ಎಂದುಕೊಂಡರು.</verse>
				<verse number="23">ಅವನು ಉತ್ಪತ್ತಿಯಾದ ಭೂಮಿಯನ್ನೇ ವ್ಯವಸಾಯ ಮಾಡಲೆಂದು ಏದೆನ್ ತೋಟದಿಂದ ಹೊರಡಿಸಿಬಿಟ್ಟರು.</verse>
				<verse number="24">ಅದಲ್ಲದೆ, ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವುದಕ್ಕಾಗಿ ಆ ವನದ ಪೂರ್ವದಿಕ್ಕಿನಲ್ಲೆ ‘ಕೆರೂಬಿ’ಯರನ್ನೂ ಪ್ರಜ್ವಲಿಸುತ್ತಾ ಎಲ್ಲ ಕಡೆ ಸುತ್ತುವ ಕತ್ತಿಯನ್ನೂ ಇರಿಸಿದರು.</verse>
			</chapter>
			<chapter number="4">
				<verse number="1">ಆದಾಮನು ತನ್ನ ಹೆಂಡತಿಯ ಜೊತೆ ಕೂಡಲು ಆಕೆ ಗರ್ಭಿಣಿಯಾಗಿ ಕಾಯಿನನನ್ನು ಹೆತ್ತಳು. “ಸರ್ವೇಶ್ವರ ಸ್ವಾಮಿಯ ಅನುಗ್ರಹದಿಂದ ಒಂದು ಗಂಡುಮಗುವನ್ನು ಪಡೆದಿದ್ದೇನೆ” ಎಂದಳು.</verse>
				<verse number="2">ತರುವಾಯ ಅವನ ತಮ್ಮನಾದ ಹೇಬೆಲನಿಗೆ ಜನ್ಮವಿತ್ತಳು. ಹೇಬೆಲನು ಕುರಿಗಾಹಿಯಾದನು; ಕಾಯಿನನು ವ್ಯವಸಾಯಗಾರನಾದನು.</verse>
				<verse number="3">ಕ್ರಮೇಣ ಕಾಯಿನನು ತಾನು ಬೆಳೆಸಿದ ಫಸಲಲ್ಲಿ ಕೆಲವನ್ನು ತಂದು ಸರ್ವೇಶ್ವರ ಸ್ವಾಮಿಗೆ ಕಾಣಿಕೆಯಾಗಿ ಸಮರ್ಪಿಸಿದನು.</verse>
				<verse number="4">ಅಂತೆಯೇ, ಹೇಬೆಲನು ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಸಮರ್ಪಿಸಿದನು.</verse>
				<verse number="5">ಸರ್ವೇಶ್ವರ ಹೇಬೆಲನನ್ನೂ ಅವನ ಕಾಣಿಕೆಯನ್ನೂ ಮೆಚ್ಚಿಕೊಂಡರು; ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಇದರಿಂದ ಕಾಯಿನನು ಕಡುಗೋಪಗೊಂಡನು; ಅವನ ಮುಖ ಸಿಂಡರಿಸಿತು.</verse>
				<verse number="6">ಆಗ ಸರ್ವೇಶ್ವರ ಕಾಯಿನನಿಗೆ, “ಕೋಪವೇಕೆ? ಮುಖ ಸಿಂಡರಿಸಿದೆ ಏಕೆ?</verse>
				<verse number="7">ನೀನು ಒಳಿತನ್ನು ಮಾಡಿದ್ದರೆ ತಲೆ ಎತ್ತುತ್ತಿದ್ದೆ; ಕೆಡುಕನ್ನು ಮಾಡಿದ್ದರಿಂದ ಪಾಪವು ಹೊಸ್ತಿಲಲ್ಲಿ ಹೊಂಚುಹಾಕುತ್ತಿದೆ; ಅದು ನಿನ್ನನ್ನು ಬಯಸುತ್ತಿದೆ. ನೀನು ಅದನ್ನು ಜಯಿಸಬೇಕು,” ಎಂದರು.</verse>
				<verse number="8">ಬಳಿಕ ಕಾಯಿನನು ತಮ್ಮ ಹೇಬೆಲನಿಗೆ, “ಹೊಲಕ್ಕೆ ಹೋಗೋಣ ಬಾ”, ಎಂದು ಕರೆದನು. ಅವರಿಬ್ಬರೂ ಅಲ್ಲಿಗೆ ಬಂದಾಗ ಕಾಯಿನನು ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು.</verse>
				<verse number="9">“ನಿನ್ನ ತಮ್ಮನೆಲ್ಲಿ?\ ಎಂದು ಸರ್ವೇಶ್ವರ ಕೇಳಿದಾಗ “ನಾನರಿಯೆ, ನನ್ನ ತಮ್ಮನಿಗೆ ನಾನೇನು ಕಾವಲುಗಾರನೋ” ಎಂದು ಕಾಯಿನನು ಉತ್ತರ ಕೊಟ್ಟನು.</verse>
				<verse number="10">ಆಗ ಸರ್ವೇಶ್ವರ, “ನೀನು ಎಂಥ ಕೃತ್ಯ ಎಸಗಿದೆ? ಪ್ರತೀಕಾರಕ್ಕಾಗಿ ನೆಲದಿಂದ ನಿನ್ನ ತಮ್ಮನ ರಕ್ತ ಕೂಗಿ ನನಗೆ ಮೊರೆಯಿಡುತ್ತಿದೆ, ಕೇಳು.</verse>
				<verse number="11">ನಿನ್ನ ಕೈ ಸುರಿಸಿದ ನಿನ್ನ ತಮ್ಮನ ರಕ್ತವನ್ನು ಕುಡಿದ ಈ ನೆಲದಿಂದಾಗಿ ನೀನು ಶಾಪಗ್ರಸ್ತನು; ತಿರಸ್ಕೃತನು.</verse>
				<verse number="12">ಇದನ್ನು ನೀನು ವ್ಯವಸಾಯ ಮಾಡಿದರೂ ಇನ್ನು ಮುಂದೆ ಇದು ಫಲಕೊಡುವುದಿಲ್ಲ. ನೆಲೆಯಿಲ್ಲದೆ ನೀನು ಲೋಕದಲ್ಲಿ ಅಲೆಮಾರಿಯಾಗಿರಬೇಕು,” ಎಂದರು.</verse>
				<verse number="13">ಅದಕ್ಕೆ ಕಾಯಿನನು, “ಸರ್ವೇಶ್ವರಾ, ಈ ಶಿಕ್ಷೆ ನನ್ನಿಂದ ಸಹಿಸಲಾಗದಷ್ಟು ಕಠಿಣ.</verse>
				<verse number="14">ಈ ನಾಡಿನಿಂದ ನನ್ನನ್ನು ಹೊರದೂಡುತ್ತಿರುವಿರಿ, ತಮ್ಮ ಸಾನ್ನಿಧ್ಯ ನನಗಿನ್ನು ದೊರಕದು; ನೆಲೆ ಇಲ್ಲದ ನಾನು ಲೋಕದಲ್ಲಿ ಅಲೆಮಾರಿಯಾಗಿರಬೇಕು; ಕಂಡಕಂಡವರೆಲ್ಲರು ನನ್ನನ್ನು ಕೊಲ್ಲುವರು” ಎಂದು ಹೇಳಿದನು.</verse>
				<verse number="15">ಅದಕ್ಕೆ ಸರ್ವೇಶ್ವರ, “ಇಲ್ಲ, ಕಾಯಿನನ ಪ್ರಾಣವನ್ನು ತೆಗೆದವನಿಗೆ ಏಳ್ಮಡಿ ದಂಡನೆ ಆಗುವುದು,\ಎಂದು ಹೇಳಿ, ಅವನನ್ನು ಕಂಡವರು ಕೊಲ್ಲದಂತೆ ಅವನ ಮೇಲೆ ಒಂದು ಗುರುತನ್ನು ಇಟ್ಟರು.</verse>
				<verse number="16">ಕಾಯಿನನು ಸರ್ವೇಶ್ವರ ಸ್ವಾಮಿಯ ಸಾನ್ನಿಧ್ಯದಿಂದ ಹೊರಟುಹೋಗಿ ಏದೆನ್ ನಾಡಿಗೆ ಪೂರ್ವಕ್ಕಿರುವ “ಅಲೆನಾಡು\ ಎಂಬ ನಾಡಿನಲ್ಲಿ ವಾಸಮಾಡಿದನು.</verse>
				<verse number="17">ಕಾಯಿನನು ತನ್ನ ಹೆಂಡತಿಯ ಜೊತೆ ಕೂಡಲು ಆಕೆ ಗರ್ಭಿಣಿಯಾಗಿ ಹನೋಕನನ್ನು ಹೆತ್ತಳು. ತಾನು ಕಟ್ಟಿದ ಊರಿಗೆ ಕಾಯಿನನು ‘ಹನೋಕ’ ಎಂದು ತನ್ನ ಮಗನ ಹೆಸರನ್ನೇ ಇಟ್ಟನು.</verse>
				<verse number="18">ಹನೋಕನಿಗೆ ಈರಾದನು ಹುಟ್ಟಿದನು. ಈರಾದನಿಗೆ ಮೆಹೂಯಾಯೇಲನು ಹುಟ್ಟಿದನು. ಮೆಹೂಯಾಯೇಲನಿಗೆ ಮೆತೂಷಾಯೇಲನು, ಮೆತೂಷಾಯೇಲನಿಗೆ ಲೆಮೆಕನು ಹುಟ್ಟಿದರು.</verse>
				<verse number="19">ಲೆಮೆಕನಿಗೆ ‘ಆದಾ’ ಹಾಗು ‘ಚಿಲ್ಲಾ’ ಎಂಬ ಇಬ್ಬರು ಹೆಂಡಿರು.</verse>
				<verse number="20">ಆದಾಳು ಯಾಬಾಲನನ್ನು ಹೆತ್ತಳು. ಗುಡಾರಗಳಲ್ಲಿದ್ದು ದನಕರುಗಳನ್ನು ಸಾಕುವವರಿಗೆ ಇವನೇ ಮೂಲಪುರುಷ.</verse>
				<verse number="21">ಇವನ ತಮ್ಮನ ಹೆಸರು ಯೂಬಾಲ, ಇವನು ಕಿನ್ನರಿ ಕೊಳಲುಗಳನ್ನು ನುಡಿಸುವವರಿಗೆ ಮೂಲಪುರುಷ.</verse>
				<verse number="22">ಚಿಲ್ಲಾ ಎಂಬುವಳು ತೂಬಲ್ ಕಾಯಿನನಿಗೆ ಜನ್ಮವಿತ್ತಳು. ಇವನು ಕಬ್ಬಿಣ, ಹಿತ್ತಾಳೆ ಆಯುಧಗಳನ್ನು ಮಾಡುವ ಕುಲುಮೆಗಾರರಿಗೆ ಮೂಲಪುರುಷ. ತೂಬಲ್ ಕಾಯಿನನ ತಂಗಿಯ ಹೆಸರು ನಯಮಾ.</verse>
				<verse number="23">ಲೆಮೆಕನು ತನ್ನ ಹೆಂಡತಿಯರಿಗೆ ಹೀಗೆಂದನು: ಆದಾ, ಚಿಲ್ಲಾ, ಕೇಳಿ ನಾನು ಹೇಳುವುದನ್ನು ಲೆಮೆಕನ ಸತಿಯರೇ, ಆಲಿಸಿ ನನ್ನ ಮಾತನ್ನು ನಾ ಹತಮಾಡಿದೆ ನನಗೆ ಗಾಯ ಮಾಡಿದವನನ್ನು ನಾ ಕೊಂದೆ ನನ್ನನ್ನು ಹೊಡೆದಾ ಪ್ರಾಯದವನನ್ನು.</verse>
				<verse number="24">ಕಾಯಿನನನ್ನು ಕೊಂದವನಿಗೆ ಆಗುವುದಾದರೆ ಪ್ರತೀಕಾರ ಏಳ್ಮಡಿ ಲೆಮೆಕನನ್ನು ಕೊಂದವನಿಗೆ ಆಗುವುದು ಪ್ರತೀಕಾರ ಎಪ್ಪತ್ತೇಳ್ಮಡಿ.</verse>
				<verse number="25">ಆದಾಮ್ ಮತ್ತು ಅವನ ಹೆಂಡತಿಗೆ ಮತ್ತೊಂದು ಗಂಡುಮಗು ಆಯಿತು. ಅಕೆ, “ಕಾಯಿನನು ಕೊಂದುಹಾಕಿದ ಹೇಬೆಲನಿಗೆ ಬದಲಾಗಿ ದೇವರು ನನಗೆ ಬೇರೆ ಸಂತಾನವನ್ನು ಅನುಗ್ರಹಿಸಿದ್ದಾರೆ,” ಎಂದುಕೊಂಡು ಅವನಿಗೆ “ಸೇತ್\ ಎಂದು ನಾಮಕರಣ ಮಾಡಿದಳು.</verse>
				<verse number="26">ತರುವಾಯ ಸೇತನು ಸಹ ಒಬ್ಬ ಮಗನನ್ನು ಪಡೆದು ಅವನಿಗೆ “ಏನೋಷ್” ಎಂದು ಹೆಸರಿಟ್ಟನು. ಜನರು “ಸರ್ವೇಶ್ವರ” ಎಂಬ ಹೆಸರನ್ನು ಆರಾಧಿಸುವುದಕ್ಕೆ ಪ್ರಾರಂಭಿಸಿದ್ದು ಆ ಕಾಲದಲ್ಲಿಯೇ.</verse>
			</chapter>
			<chapter number="5">
				<verse number="1">ಆದಾಮನ ವಂಶದವರ ಚರಿತ್ರೆ: ಸೃಷ್ಟಿಕಾಲದಲ್ಲಿ ದೇವರು ಮಾನವನನ್ನು ತಮ್ಮ ಹೋಲಿಕೆಯಂತೆಯೇ ಸೃಷ್ಟಿಮಾಡಿದರು.</verse>
				<verse number="2">ಅವರನ್ನು ಗಂಡನ್ನಾಗಿಯೂ ಹೆಣ್ಣನ್ನಾಗಿಯೂ ಮಾಡಿದರು. ಅಂದೇ ಅವರನ್ನು ಆಶೀರ್ವದಿಸಿ ಅವರಿಗೆ ‘ಮನುಷ್ಯ’ರೆಂದು ಹೆಸರಿಟ್ಟರು.</verse>
				<verse number="3">ಆದಾಮನು 130 ವರ್ಷದವನಾದಾಗ ರೂಪದಲ್ಲಿ ತನ್ನಂತೆಯೇ ಇದ್ದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು.</verse>
				<verse number="4">ಸೇತನು ಹುಟ್ಟಿದ ಮೇಲೆ ಆದಾಮನು 800 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳು ಇದ್ದರು.</verse>
				<verse number="5">ಸತ್ತಾಗ ಅವನಿಗೆ 930 ವರ್ಷಗಳಾಗಿದ್ದವು.</verse>
				<verse number="6">ಸೇತನು 105 ವರ್ಷದವನಾದಾಗ ಎನೋಷನನ್ನು ಪಡೆದನು.</verse>
				<verse number="7">ಎನೋಷನು ಹುಟ್ಟಿದ ಮೇಲೆ ಅವನು 807 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳೂ ಇದ್ದರು.</verse>
				<verse number="8">ಸತ್ತಾಗ ಅವನಿಗೆ 912 ವರ್ಷಗಳಾಗಿದ್ದವು.</verse>
				<verse number="9">ಎನೋಷನು 90 ವರ್ಷದವನಾದಾಗ ಕೇನಾನನ್ನು ಪಡೆದನು.</verse>
				<verse number="10">ಕೇನಾನನು ಹುಟ್ಟಿದ ಮೇಲೆ ಎನೋಷನು 815 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳೂ ಇದ್ದರು.</verse>
				<verse number="11">ಸತ್ತಾಗ ಅವನಿಗೆ ಒಟ್ಟು 905 ವರ್ಷಗಳಾಗಿದ್ದವು.</verse>
				<verse number="12">ಕೇನಾನನು 70 ವರ್ಷದವನಾದಾಗ ಮಹಲಲೇಲನನ್ನು ಪಡೆದನು.</verse>
				<verse number="13">ಮಹಲಲೇಲನು ಹುಟ್ಟಿದ ಮೇಲೆ ಕೇನಾನನು 840 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು.</verse>
				<verse number="14">ಸತ್ತಾಗ ಅವನಿಗೆ ಒಟ್ಟು 910 ವರ್ಷಗಳಾಗಿದ್ದವು.</verse>
				<verse number="15">ಮಹಲಲೇಲನು 65 ವರ್ಷದವನಾದಾಗ ಯೆರೆದನನ್ನು ಪಡೆದನು.</verse>
				<verse number="16">ಯೆರೆದನು ಹುಟ್ಟಿದ ಮೇಲೆ ಮಹಲಲೇಲನು 830 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು.</verse>
				<verse number="17">ಸತ್ತಾಗ ಅವನಿಗೆ ಒಟ್ಟು 895 ವರ್ಷಗಳಾಗಿದ್ದುವು.</verse>
				<verse number="18">ಯೆರೆದನು 162 ವರ್ಷದವನಾದಾಗ ಹನೋಕನನ್ನು ಪಡೆದನು.</verse>
				<verse number="19">ಹನೋಕನು ಹುಟ್ಟಿದ ಮೇಲೆ ಯೆರೆದನು 800 ವರ್ಷ ಬದುಕಿದನು.</verse>
				<verse number="20">ಸತ್ತಾಗ ಅವನಿಗೆ ಒಟ್ಟು 962 ವರ್ಷಗಳಾಗಿದ್ದವು.</verse>
				<verse number="21">ಹನೋಕನು 65 ವರ್ಷದವನಾದಾಗ ಮೆತೂಷೆಲಹನನ್ನು ಪಡೆದನು.</verse>
				<verse number="22">ಮೆತೂಷೆಲಹನು ಹುಟ್ಟಿದ ಮೇಲೆ ಹನೋಕನು ದೇವರಲ್ಲಿ ಅನ್ಯೋನ್ಯತೆಯಿಂದ 300 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು.</verse>
				<verse number="23">ಅವನು ಬದುಕಿದ ಕಾಲವೆಲ್ಲ 365 ವರ್ಷಗಳು.</verse>
				<verse number="24">ಹನೋಕ ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಾ ಇದ್ದಾಗ ದೇವರು ಅವನನ್ನು ಕರೆದುಕೊಂಡ ಕಾರಣ ಕಣ್ಮರೆಯಾದನು.</verse>
				<verse number="25">ಮೆತೂಷೆಲಹನು 187 ವರ್ಷದವನಾದಾಗ ಲೆಮೆಕನನ್ನು ಪಡೆದನು.</verse>
				<verse number="26">ಲೆಮೆಕನು ಹುಟ್ಟಿದ ಮೇಲೆ 782 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು.</verse>
				<verse number="27">ಸತ್ತಾಗ ಅವನಿಗೆ ಒಟ್ಟು 969 ವರ್ಷಗಳಾಗಿದ್ದವು.</verse>
				<verse number="28">ಲೆಮೆಕನು 182 ವರ್ಷದವನಾದಾಗ ಒಬ್ಬ ಮಗನನ್ನು ಪಡೆದನು.</verse>
				<verse number="29">ಪ್ರಭು ಶಪಿಸಿದ ಭೂಮಿಯಲ್ಲಿ ನಾವು ಕೈಕೆಸರಾಗಿಸಿಕೊಂಡು ಪಡುವ ಶ್ರಮೆಯಲ್ಲಿ ಈ ಮಗನು ಉಪಶಮನ ತರುವನು ಎಂದುಕೊಂಡು ಅವನಿಗೆ ನೋಹ ಎಂದು ಹೆಸರಿಟ್ಟನು.</verse>
				<verse number="30">ನೋಹನು ಹುಟ್ಟಿದ ಮೇಲೆ ಲೆಮೆಕನು 595 ವರ್ಷ ಬದುಕಿದನು. ಅವನಿಗೆ ಬೇರೆ ಗಂಡು ಮತ್ತು ಹೆಣ್ಣುಮಕ್ಕಳಿದ್ದರು.</verse>
				<verse number="31">ಸತ್ತಾಗ ಅವನಿಗೆ ಒಟ್ಟು 777 ವರ್ಷಗಳಾಗಿದ್ದವು.</verse>
				<verse number="32">ನೋಹನು 500 ವರ್ಷದವನಾದಾಗ ಶೆಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು.</verse>
			</chapter>
			<chapter number="6">
				<verse number="1">ಮಾನವಕುಲವು ಜಗದ ಮೇಲೆ ಹಬ್ಬಿಹರಡಿದಂತೆ ಅವರಿಗೆ ಹೆಣ್ಣುಮಕ್ಕಳು ಹುಟ್ಟಿದರು.</verse>
				<verse number="2">ಈ ಮನುಷ್ಯಪುತ್ರಿಯರ ಚೆಲುವನ್ನು ಕಂಡು ದೇವಪುತ್ರರು ತಮಗೆ ಇಷ್ಟಬಂದವರನ್ನೆಲ್ಲ ಮದುವೆಯಾದರು.</verse>
				<verse number="3">ಆಗ ಸರ್ವೇಶ್ವರ ಸ್ಸ್ವಾಮಿ, “ನನ್ನ ಆತ್ಮವು ಮನುಷ್ಯನಿಗೆ ಶಾಶ್ವತವಾಗಿ ಹೊಣೆಯಾಗಿರಲಾರದು. ಭ್ರಷ್ಟರಾದ ಅವರು ಮರ್ತ್ಯರು. ಅವರ ಆಯುಷ್ಯ ಕೇವಲ ನೂರಿಪ್ಪತ್ತು ವರ್ಷ ಇರಲಿ” ಎಂದರು.</verse>
				<verse number="4">ದೇವಪುತ್ರರೂ ಮನುಷ್ಯಪುತ್ರಿಯರೂ ಕೂಡಿ ಮಕ್ಕಳು ಹುಟ್ಟಿದರು. ಆ ಕಾಲದಿಂದಲೂ ಅದಾದನಂತರವೂ ಜಗದಲ್ಲಿ ‘ನೆಪೀಲಿಯರು’ ಇದ್ದರು. ಇವರೇ ಪ್ರಾಚೀನಕಾಲದ ಸುಪ್ರಸಿದ್ಧ ಪರಾಕ್ರಮಿಗಳು.</verse>
				<verse number="5">ಜಗತ್ತಿನಲ್ಲಿ ಮನುಜರ ಕೆಟ್ಟತನವು ಹೆಚ್ಚುತ್ತಲೇ ಇತ್ತು. ಅವರ ಮನದಾಲೋಚನೆಗಳು ಸದಾ ಕೆಟ್ಟದಾಗಿದ್ದವು.</verse>
				<verse number="6">ಇದನ್ನು ಕಂಡ ಸರ್ವೇಶ್ವರ ಮನುಜನನ್ನು ಇಲ್ಲಿ ಸೃಷ್ಟಿಮಾಡಿದ್ದಕ್ಕಾಗಿ ವ್ಯಥೆಪಟ್ಟು,</verse>
				<verse number="7">“ನಾನು ಸೃಷ್ಟಿಸಿದ ಮಾನವರನ್ನು ಈ ಜಗದಿಂದ ಅಳಿಸಿಬಿಡುತ್ತೇನೆ, ಅವರೊಂದಿಗೆ ಪ್ರಾಣಿಪಕ್ಷಿಗಳನ್ನು, ಕ್ರಿಮಿಕೀಟಗಳನ್ನು ಅಳಿಸಿಹಾಕುತ್ತೇನೆ. ಅವುಗಳನ್ನು ಉಂಟುಮಾಡಿದ್ದಕ್ಕಾಗಿ ನನಗೆ ದುಃಖವಾಗುತ್ತಿದೆ,” ಎಂದುಕೊಂಡರು.</verse>
				<verse number="8">ಆದರೆ ನೋಹನ ವಿಷಯದಲ್ಲಿ ಸರ್ವೇಶ್ವರ ಸ್ವಾಮಿಗೆ ಮೆಚ್ಚುಗೆಯಿತ್ತು.</verse>
				<verse number="9">ನೋಹನ ಚರಿತ್ರೆಯಿದು: ಆತ ಸತ್ಪುರುಷ, ಅವನಂಥ ನಿರ್ದೋಷಿ ಆ ಕಾಲದಲ್ಲಿ ಯಾರೂ ಇರಲಿಲ್ಲ. ದೇವರೊಡನೆ ಆತ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಿದ್ದ.</verse>
				<verse number="10">ಆತನಿಗೆ ಶೇಮ್, ಹಾಮ್ ಮತ್ತು ಯೆಫೆತ್ ಎಂಬ ಮೂರು ಮಂದಿ ಮಕ್ಕಳು.</verse>
				<verse number="11">ಜಗತ್ತು ದೇವರ ದೃಷ್ಟಿಯಲ್ಲಿ ಕೆಟ್ಟುಹೋಗಿತ್ತು. ಹಿಂಸಾಚಾರದಿಂದ ತುಂಬಿತುಳುಕುತ್ತಿತ್ತು.</verse>
				<verse number="12">ಭೂನಿವಾಸಿಗಳೆಲ್ಲರು ತಮ್ಮ ನಡತೆಯನ್ನು ಕೆಡಿಸಿಕೊಂಡಿದ್ದರು.</verse>
				<verse number="13">ಜಗವಿಡೀ ಕೆಟ್ಟುಹೋಗಿರುವುದನ್ನು ಕಂಡ ದೇವರು, ನೋಹನಿಗೆ, “ನರಮಾನವರೆಲ್ಲರಿಗೆ ಸರ್ವನಾಶವನ್ನು ತೀರ್ಮಾನಿಸಿದ್ದೇನೆ. ಜಗವೆಲ್ಲವು ಹಿಂಸಾಚಾರದಿಂದ ತುಂಬಿಹೋಗಿದೆ. ನಾನು ಅವರನ್ನೂ ಜಗದಲ್ಲಿರುವುದೆಲ್ಲವನ್ನೂ ಅಳಿಸಿಬಿಡುತ್ತೇನೆ.</verse>
				<verse number="14">ನೀನು ತುರಾಯಿಮರದಿಂದ ನಾವೆಯೊಂದನ್ನು ಮಾಡಿಕೊ; ಅದರ ತುಂಬ ಕೊಠಡಿಗಳಿರಲಿ; ಅದರ ಒಳಕ್ಕೂ ಹೊರಕ್ಕೂ ರಾಳಪದಾರ್ಥವನ್ನು ಹಚ್ಚು.</verse>
				<verse number="15">ಅದನ್ನು ಹೀಗೆ ಮಾಡು: ಅದರ ಉದ್ದ ಮುನ್ನೂರು ಮೊಳ, ಅಗಲ ಐವತ್ತು ಮೊಳ, ಎತ್ತರ ಮೂವತ್ತು ಮೊಳ ಇರಲಿ.</verse>
				<verse number="16">ಅದರ ಚಾವಣಿಯ ಕೆಳಗೆ ಸುತ್ತಲೂ ಒಂದು ಮೊಳ ಎತ್ತರದ ಕಿಟಕಿ ಇಡು, ಪಕ್ಕದಲ್ಲಿ ಬಾಗಿಲಿರಲಿ; ಒಂದರ ಮೇಲೆ ಒಂದರಂತೆ ನಾವೆಯಲ್ಲಿ ಮೂರು ಅಂತಸ್ತುಗಳನ್ನು ಮಾಡು.</verse>
				<verse number="17">ನಾನು ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಲಿದ್ದೇನೆ. ಅದು ಆಕಾಶದ ಕೆಳಗಿರುವ ಸಕಲ ಪ್ರಾಣಿಗಳನ್ನೂ ಅಳಿಸಿಬಿಡುವುದು. ಭೂಮಿಯಲ್ಲಿರುವ ಸಮಸ್ತವೂ ನಾಶವಾಗುವುದು.</verse>
				<verse number="18">ಆದರೆ ನಿನ್ನೊಡನೆ ಒಂದು ಒಡಂಬಡಿಕೆ ಮಾಡಿಕೊಳ್ಳುತ್ತೇನೆ. ನೀನು ಹೆಂಡತಿ, ಮಕ್ಕಳು ಹಾಗೂ ಸೊಸೆಯರ ಸಮೇತ ನಾವೆಯನ್ನು ಹತ್ತಬೇಕು.</verse>
				<verse number="19">ಅಲ್ಲದೆ, ನಿನ್ನೊಡನೆ ಬದುಕಿಸಲು ಜೀವಿಗಳ ಪ್ರತಿಯೊಂದು ಜಾತಿಯಲ್ಲೂ ಒಂದು ಗಂಡು, ಒಂದು ಹೆಣ್ಣು ಹೀಗೆ ಒಂದೊಂದು ಜೊತೆಯನ್ನು ನಾವೆಯಲ್ಲಿ ಸೇರಿಸಿಕೊ.</verse>
				<verse number="20">ಪ್ರಾಣಿಪಕ್ಷಿ, ಕ್ರಿಮಿಕೀಟ ಇವುಗಳ ಸಕಲ ಜಾತಿಗಳಲ್ಲಿ ಎರಡೆರಡು ಬದುಕಿಬಾಳಲು ನಿನ್ನೊಡನೆ ಬರಲಿ.</verse>
				<verse number="21">ಎಲ್ಲ ತರಹದ ಭೋಜನಪದಾರ್ಥಗಳನ್ನು ಶೇಖರಿಸಿಟ್ಟುಕೊ. ಅದು ನಿನಗೂ ಪ್ರಾಣಿಗಳಿಗೂ ಆಹಾರವಾಗುವುದು,” ಎಂದು ಹೇಳಿದರು.</verse>
				<verse number="22">ನೋಹನು ಹಾಗೆಯೇ ಮಾಡಿದನು. ದೇವರ ಆಜ್ಞಾನುಸಾರ ನಡೆದುಕೊಂಡನು.</verse>
			</chapter>
			<chapter number="7">
				<verse number="1">ಸರ್ವೇಶ್ವರ ಸ್ವಾಮಿ ನೋಹನಿಗೆ, \ನೀನೂ ನಿನ್ನ ಮನೆಯವರೆಲ್ಲರೂ ನಾವೆಯನ್ನು ಸೇರಿಕೊಳ್ಳಿರಿ; ಈಗಿನ ಪೀಳಿಗೆಯಲ್ಲಿ ನೀನೊಬ್ಬನೇ ನನ್ನ ದೃಷ್ಟಿಗೆ ಸತ್ಪುರುಷ.</verse>
				<verse number="2">ಎಲ್ಲ ಶುದ್ಧ ಪ್ರಾಣಿಗಳಲ್ಲಿ ಏಳೇಳು ಗಂಡುಹೆಣ್ಣುಗಳನ್ನು ಶುದ್ಧವಲ್ಲದ ಪ್ರಾಣಿಗಳಲ್ಲಿ ಎರಡೆರಡು ಗಂಡುಹೆಣ್ಣುಗಳನ್ನೂ ನಿನ್ನೊಂದಿಗೆ ಕರೆದುಕೊ.</verse>
				<verse number="3">ಪಕ್ಷಿಗಳಲ್ಲಿಯೂ ಏಳೇಳು ಗಂಡುಹೆಣ್ಣುಗಳನ್ನು ತೆಗೆದುಕೊ. ಹೀಗೆ ಆಯಾ ಜಾತಿಯನ್ನು ಭೂಮಿಯಲ್ಲಿ ಉಳಿಸಿ ಕಾಪಾಡಬೇಕು.</verse>
				<verse number="4">ಏಳು ದಿನಗಳಾನಂತರ ಭೂಮಿಯ ಮೇಲೆ ನಲವತ್ತು ದಿನ ಹಗಲಿರುಳೆನ್ನದೆ ಮಳೆ ಸುರಿಸುವೆನು; ನಾನು ಸೃಷ್ಟಿಮಾಡಿದ ಜೀವರಾಶಿಗಳನ್ನೆಲ್ಲ ಭೂಮಿಯಿಂದ ಅಳಿಸಿಹಾಕುವೆನು,” ಎಂದು ಹೇಳಿದರು.</verse>
				<verse number="5">ಸರ್ವೇಶ್ವರ ಆಜ್ಞಾಪಿಸಿದಂತೆಯೇ ನೋಹನು ಎಲ್ಲವನ್ನು ಮಾಡಿದನು.</verse>
				<verse number="6">ಭೂಮಿಯ ಮೇಲೆ ಜಲಪ್ರಳಯ ಬಂದಾಗ ನೋಹನಿಗೆ ಆರುನೂರು ವರ್ಷ.</verse>
				<verse number="7">ಆ ಜಲಪ್ರಳಯದಿಂದ ತಪ್ಪಿಸಿಕೊಳ್ಳಲು ನೋಹನು ತನ್ನ ಮಡದಿ, ಮಕ್ಕಳು, ಸೊಸೆಯರ ಸಮೇತ ನಾವೆಯನ್ನು ಹತ್ತಿದನು.</verse>
				<verse number="8">ದೇವರ ಆಜ್ಞಾನುಸಾರ ಶುದ್ಧಾಶುದ್ಧ ಪ್ರಾಣಿಗಳಲ್ಲಿಯೂ ಪಕ್ಷಿಗಳಲ್ಲಿಯೂ ಕ್ರಿಮಿಕೀಟಗಳಲ್ಲಿಯೂ</verse>
				<verse number="9">ಗಂಡುಹೆಣ್ಣುಗಳು ಜೋಡಿಜೋಡಿಯಾಗಿ ಬಂದು ನೋಹನೊಂದಿಗೆ ನಾವೆಯಲ್ಲಿ ಸೇರಿಕೊಂಡವು.</verse>
				<verse number="10">ಏಳು ದಿನಗಳಾದ ಬಳಿಕ ಜಲಪ್ರಳಯವಾಗತೊಡಗಿತು.</verse>
				<verse number="11">ನೋಹನ ಜೀವಮಾನದ ಆರುನೂರನೆಯ ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನ ಭೂಮಿಯ ಅಡಿಸಾಗರದ ಸೆಲೆಗಳು ಒಡೆದವು. ಆಕಾಶದ ತೂಬುಗಳು ತೆರೆದವು.</verse>
				<verse number="12">ನಲವತ್ತು ದಿನವೂ ಹಗಲಿರುಳೆನ್ನದೆ ಭೂಮಿಯ ಮೇಲೆ ಬಿರುಮಳೆ ಸುರಿಯಿತು.</verse>
				<verse number="13">ಅದೇ ದಿನ ನೋಹನೂ ಅವನ ಹೆಂಡತಿಯೂ ಮತ್ತು ಶೇಮ್, ಹಾಮ್, ಯೆಫೆತ್ ಎಂಬ ಅವನ ಮಕ್ಕಳೂ ಅವರ ಮಡದಿಯರೂ ನಾವೆಯನ್ನು ಹೊಕ್ಕರು.</verse>
				<verse number="14">ಅವರೊಂದಿಗೆ ಸಕಲ ವಿಧವಾದ ಕಾಡುಮೃಗಗಳೂ ಸಾಕು ಪ್ರಾಣಿಗಳೂ ಕ್ರಿಮಿಕೀಟಗಳೂ ರೆಕ್ಕೆಬಡಿಯುವ ಹಕ್ಕಿಪಕ್ಷಿಗಳೂ</verse>
				<verse number="15">ತಮ್ಮತಮ್ಮ ಜಾತಿಗನುಸಾರ ಎಲ್ಲ ಜೀವಿಗಳು ಎರಡೆರಡಾಗಿ ಬಂದು ನಾವೆಯನ್ನು ಸೇರಿದವು.</verse>
				<verse number="16">ದೇವರು ನೋಹನಿಗೆ ಅಪ್ಪಣೆಕೊಟ್ಟ ಮೇರೆಗೆ, ಗಂಡು ಹೆಣ್ಣಂತೆ ಎಲ್ಲ ಪ್ರಾಣಿಗಳು ಬಂದು ಸೇರಿದವು. ಬಳಿಕ ಸರ್ವೇಶ್ವರ, ನೋಹನನ್ನು ಒಳಗೆ ಬಿಟ್ಟು ಬಾಗಿಲನ್ನು ಮುಚ್ಚಿದರು.</verse>
				<verse number="17">ಜಲಪ್ರಳಯಡ ಮಳೆ ನಲವತ್ತು ದಿನ ಭೂಮಿಯ ಮೇಲೆ ಒಂದೇ ಸಮನೆ ಸುರಿಯಿತು. ನೀರು ಹೆಚ್ಚುತ್ತಾ ನಾವೆಯನ್ನು ಮೇಲೆತ್ತಲು ಅದು ನೀರಿನ ಮೇಲೆ ತೇಲತೊಡಗಿತು.</verse>
				<verse number="18">ನೀರು ಪ್ರಬಲವಾಗಿ ಹೆಚ್ಚಲು ನಾವೆಯು ಅದರ ಮೇಲೆ ಚಲಿಸಿತು.</verse>
				<verse number="19">ಅದು ಇನ್ನೂ ಎಷ್ಟು ಅಧಿಕವಾಯಿತು ಎಂದರೆ, ಆಕಾಶದ ಕೆಳಗಿರುವ ಗುಡ್ಡಬೆಟ್ಟಗಳೆಲ್ಲ ಮುಚ್ಚಿಹೋದವು.</verse>
				<verse number="20">ಹೀಗೆ ಮುಚ್ಚಿಹೋದ ಬೆಟ್ಟಗಳ ಮೇಲೆ ಹದಿನೈದು ಮೊಳ ನೀರು ನಿಂತಿತು.</verse>
				<verse number="21">ಈ ಕಾರಣ ಭೂಮಿಯ ಮೇಲೆ ಸಂಚರಿಸುತ್ತಿದ್ದ ಎಲ್ಲ ಪ್ರಾಣಿಗಳು, ಕಾಡುಮೃಗಗಳು, ಸಾಕುಪ್ರಾಣಿಗಳು, ಕ್ರಿಮಿಕೀಟಗಳು, ಮನುಷ್ಯರು ಸಹಿತವಾಗಿ ನಾಶವಾದುವು.</verse>
				<verse number="22">ಉಸಿರಾಡುವ ಭೂಮಿಯ ಜಂತುಗಳೆಲ್ಲ ಸತ್ತುಹೋದವು.</verse>
				<verse number="23">ಮನುಷ್ಯರು ಮೊದಲ್ಗೊಂಡು ಪ್ರಾಣಿಪಕ್ಷಿ, ಕ್ರಿಮಿಕೀಟದವರೆಗೆ ಭೂಮಿಯ ಮೇಲಿನದೆಲ್ಲವೂ ನಾಶವಾಯಿತು. ಭೂಮಿಯಿಂದ ಎಲ್ಲವೂ ನಿರ್ಮೂಲವಾಯಿತು. ನೋಹನು ಹಾಗೂ ಅವನೊಂದಿಗೆ ನಾವೆಯಲ್ಲಿದ್ದ ಜೀವಿಗಳು ಮಾತ್ರ ಉಳಿದುಕೊಂಡವು.</verse>
				<verse number="24">ಪ್ರಳಯದ ನೀರು ಭೂಮಿಯ ಮೇಲೆ ನೂರೈವತ್ತು ದಿನಗಳವರೆಗೂ ಪ್ರಬಲವಾಗಿಯೇ ಇತ್ತು.</verse>
			</chapter>
			<chapter number="8">
				<verse number="1">ದೇವರಿಗೆ ನೋಹನ ಮತ್ತು ಅವನ ಸಂಗಡ ನಾವೆಯಲ್ಲಿದ್ದ ಎಲ್ಲ ಪ್ರಾಣಿಪಕ್ಷಿಗಳ ನೆನಪಿತ್ತು. ಅವರು ಭೂಮಿಯ ಮೇಲೆ ಗಾಳಿ ಬೀಸುವಂತೆ ಮಾಡಲು ನೀರು ತಗ್ಗಿತು.</verse>
				<verse number="2">ಭೂಮಿಯ ಅಡಿಸಾಗರದ ಸೆಲೆಗಳು ಹಾಗೂ ಆಕಾಶದ ತೂಬುಗಳು ಮುಚ್ಚಿಹೋದವು; ಸುರಿಯುತ್ತಿದ್ದ ಮಳೆ ನಿಂತುಹೋಯಿತು.</verse>
				<verse number="3">ಭೂಮಿಯ ಮೇಲಿದ್ದ ನೀರು ಸ್ವಲ್ಪ ಸ್ವಲ್ಪವಾಗಿ ತಗ್ಗುತ್ತಾ ನೂರೈವತ್ತು ದಿನಗಳಾದ ಮೇಲೆ ಕಡಿಮೆಯಾಯಿತು.</verse>
				<verse number="4">ಏಳನೆಯ ತಿಂಗಳಿನ ಹದಿನೇಳನೆಯ ದಿನ ನಾವೆಯು ಅರಾರಾಟ್ ನಾಡಿನ ಬೆಟ್ಟದ ಸಾಲಿನಲ್ಲಿ ನಿಂತಿತು.</verse>
				<verse number="5">ಹತ್ತನೆಯ ತಿಂಗಳಿನವರೆಗೂ ನೀರು ಕ್ರಮೇಣ ಕಡಿಮೆಯಾಗುತ್ತ ಬಂದು ಹತ್ತನೆಯ ತಿಂಗಳಿನ ಮೊದಲನೆಯ ದಿನ ಬೆಟ್ಟಗಳ ಶಿಖರಗಳು ಕಾಣಿಸಿಕೊಂಡವು.</verse>
				<verse number="6">ನಲವತ್ತು ದಿನಗಳಾದ ಮೇಲೆ ನೋಹನು ತಾನು ಮಾಡಿದ್ದ ನಾವೆಯ ಕಿಟಕಿಯನ್ನು ತೆರೆದು ಕಾಗೆಯೊಂದನ್ನು ಹೊರಕ್ಕೆ ಬಿಟ್ಟನು.</verse>
				<verse number="7">ಅದು ಭೂಮಿಯ ಮೇಲಿದ್ದ ನೀರು ಒಣಗುವ ತನಕ ಹೋಗುತ್ತಾ ಬರುತ್ತಾ ಇತ್ತು.</verse>
				<verse number="8">ನೀರು ಇಳಿಯಿತೋ ಇಲ್ಲವೋ ಎಂದು ತಿಳಿದುಕೊಳ್ಳಲು ನೋಹನು ಅನಂತರ ಪಾರಿವಾಳವೊಂದನ್ನು ಹೊರಕ್ಕೆ ಬಿಟ್ಟನು.</verse>
				<verse number="9">ಭೂಮಿಯ ಮೇಲೆಲ್ಲ ನೀರು ಇದ್ದುದರಿಂದ, ಕಾಲಿಡುವುದಕ್ಕೆ ಸ್ಥಳ ಕಾಣದೆ ಈ ಪಾರಿವಾಳ ನಾವೆಗೆ ಹಿಂತಿರುಗಿತು. ನೋಹನು ಕೈ ಚಾಚಿ ಅದನ್ನು ಹಿಡಿದುಕೊಂಡು ನಾವೆಯೊಳಗೆ ಹಾಕಿಕೊಂಡನು.</verse>
				<verse number="10">ಇನ್ನೂ ಏಳು ದಿವಸ ಕಾದು, ಪಾರಿವಾಳವನ್ನು ಹೊರಕ್ಕೆಬಿಟ್ಟನು.</verse>
				<verse number="11">ಸಂಜೆ ವೇಳೆಗೆ ಆ ಪಾರಿವಾಳ ಅವನ ಬಳಿಗೆ ಮರಳಿತು; ಆಗ ಇಗೋ! ಅದರ ಬಾಯಲ್ಲಿ ಎಣ್ಣೇಮರದ ಹೊಸ ಚಿಗುರಿತ್ತು. ಇದನ್ನು ನೋಡಿ ನೋಹನು ಭೂಮಿಯ ಮೇಲಿಂದ ನೀರು ಇಳಿದುಹೋಗಿದೆಯೆಂದು ತಿಳಿದುಕೊಂಡನು.</verse>
				<verse number="12">ಮತ್ತೆ ಏಳುದಿನಗಳಾದ ಮೇಲೆ ಇನ್ನೊಮ್ಮೆ ಪಾರಿವಾಳವನ್ನು ಹೊರಕ್ಕೆ ಬಿಟ್ಟನು. ಈ ಸಾರಿ ಅದು ಹಿಂತಿರುಗಿ ಬರಲೇ ಇಲ್ಲ.</verse>
				<verse number="13">ನೋಹನ 601 ನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಂದು ಭೂಮಿಯ ಮೇಲಿದ್ದ ನೀರು ಇಳಿದಿತ್ತು. ನೋಹನು ನಾವೆಯ ಗವಸಣಿಗೆಯನ್ನು ತೆಗೆದು ನೋಡಿದನು. ಇಗೋ, ಭೂಮಿಯ ತೇವ ಆರುತ್ತಿತ್ತು.</verse>
				<verse number="14">ಎರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಂದು ನೆಲವು ಪೂರ್ತಿಯಾಗಿ ಒಣಗಿತ್ತು.</verse>
				<verse number="15">ಆಗ ದೇವರು ನೋಹನಿಗೆ, “ನೀನು, ನಿನ್ನ ಹೆಂಡತಿ, ಮಕ್ಕಳು ಮತ್ತು ಅವರ ಮಡದಿಯರು ನಾವೆಯನ್ನು ಬಿಟ್ಟು ಹೊರಗೆ ಬನ್ನಿ.</verse>
				<verse number="16"></verse>
				<verse number="17">ನಿನ್ನ ಬಳಿಯಿರುವ ಪ್ರಾಣಿಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲ ಜೀವಿಗಳೂ ಹೊರಗೆ ಬರಲಿ; ಅವುಗಳ ಸಂಖ್ಯೆ ಭೂಮಿಯಲ್ಲಿ ಬೆಳೆಯಲಿ; ಅವು ಹೆಚ್ಚಿ ವೃದ್ಧಿಯಾಗಲಿ,” ಎಂದರು.</verse>
				<verse number="18">ಅಂತೆಯೇ ನೋಹನು, ಮಡದಿ, ಮಕ್ಕಳು, ಸೊಸೆಯರ ಸಮೇತ ಹೊರಗೆ ಬಂದನು.</verse>
				<verse number="19">ಪ್ರಾಣಿ, ಪಶು, ಪಕ್ಷಿ, ಕ್ರಿಮಿ ಇವುಗಳೆಲ್ಲವೂ ತಮ್ಮ ತಮ್ಮ ಜಾತಿಗನುಸಾರ ನಾವೆಯಿಂದ ಹೊರಗೆ ಬಂದವು.</verse>
				<verse number="20">ನೋಹನು ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿದನು. ಶುದ್ಧವಾದ ಎಲ್ಲ ಪ್ರಾಣಿಪಕ್ಷಿಗಳಿಂದ ಆಯ್ದು ಆ ಪೀಠದ ಮೇಲೆ ದಹನಬಲಿಯನ್ನು ಅರ್ಪಿಸಿದನು.</verse>
				<verse number="21">ಗಮಗಮಿಸುವ ಅದರ ಸುಗಂಧವು ಸ್ವಾಮಿಯನ್ನು ಮುಟ್ಟಿತು. ಅವರು ಮನದಲ್ಲೆ ಹೀಗೆಂದುಕೊಂಡರು: “ಇನ್ನು ಮೇಲೆ ನಾನು ಮನುಷ್ಯರ ನಿಮಿತ್ತ ಭೂಮಿಯನ್ನು ಶಪಿಸುವುದಿಲ್ಲ. ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದು. ಈಗ ಮಾಡಿದಂತೆ ಇನ್ನು ಮೇಲೆ ಎಲ್ಲ ಜೀವಿಗಳನ್ನು ನಾನು ಸಂಹರಿಸುವುದಿಲ್ಲ.</verse>
				<verse number="22">ಬಿತ್ತನೆ - ಕೊಯಿಲು ಚಳಿ - ಬಿಸಿಲು ಗ್ರೀಷ್ಮ - ಹೇಮಂತ ಹಗಲು - ಇರುಳು ಈ ಕ್ರಮಕ್ಕೆ ಇರದು ಅಂತ್ಯ ಜಗವಿರುವವರೆಗು.”</verse>
			</chapter>
			<chapter number="9">
				<verse number="1">ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಹೀಗೆಂದರು - “ನೀವು ಅಭಿವೃದ್ಧಿಯಾಗಿ ಹೆಚ್ಚು ಮಕ್ಕಳನ್ನು ಪಡೆಯಿರಿ’; ಭೂಲೋಕದಲ್ಲೆಲ್ಲ ಹರಡಿಕೊಳ್ಳಿ.</verse>
				<verse number="2">ಭೂಮಿಯ ಮೇಲಿರುವ ಎಲ್ಲ ಪ್ರಾಣಿಗಳೂ ಆಕಾಶದ ಎಲ್ಲ ಪಕ್ಷಿಗಳೂ ನೆಲದ ಮೇಲೆ ಹರಿದಾಡುವ ಎಲ್ಲ ಕ್ರಿಮಿಕೀಟಗಳೂ ಸಮುದ್ರದ ಎಲ್ಲ ಮೀನುಗಳೂ ನಿಮಗೆ ಹೆದರಿ ಬೆದರುವುವು. ಅವುಗಳನ್ನೆಲ್ಲ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.</verse>
				<verse number="3">ಭೂಮಿಯ ಮೇಲೆ ಪೈರುಪಚ್ಚೆಯನ್ನು ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.</verse>
				<verse number="4">ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತಸಮೇತ ತಿನ್ನಬಾರದು.</verse>
				<verse number="5">ನಿಮ್ಮ ರಕ್ತಸುರಿಸಿ ಪ್ರಾಣತೆಗೆಯುವವರೆಗೆ ಮುಯ್ಯಿತೀರಿಸುವೆನು - ಮೃಗವಾಗಿದ್ದರೆ ಅದಕ್ಕೂ, ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿತೀರಿಸುವೆನು.</verse>
				<verse number="6">\ನಿರ್ಮಿಸಿಹರು ದೇವರು ತಮ್ಮ ಸ್ವರೂಪದಲ್ಲಿ ನರನನ್ನು ಎಂತಲೆ ನರನನ್ನು ಕೊಲ್ಲುವವನು ನರನಿಂದಲೇ ಹತನಾಗುವನು.</verse>
				<verse number="7">ನೀವು ಹೆಚ್ಚಿ ಅಭಿವೃದ್ಧಿಯಾಗಿರಿ, ನಿಮ್ಮ ಸಂಖ್ಯೆ ಬೆಳೆಯಲಿ ಭೂಮಿಯಲ್ಲಿ.\</verse>
				<verse number="8">ಇದಲ್ಲದೆ ದೇವರು ನೋಹನಿಗೂ ಅವನ ಮಕ್ಕಳಿಗೂ ಇಂತೆಂದು ಹೇಳಿದರು:</verse>
				<verse number="9">“ಕೇಳಿ, ನಾನು ನಿಮ್ಮನ್ನೂ ನಿಮ್ಮ ಸಂತತಿಯವರನ್ನೂ</verse>
				<verse number="10">ನಿಮ್ಮ ಕೂಡ ನಾವೆಯಿಂದ ಹೊರಟುಬಂದ ಪ್ರಾಣಿ-ಪಕ್ಷಿ-ಮೃಗಾದಿ ಸಕಲ ಭೂಜಂತುಗಳನ್ನೂ ಕುರಿತು ಒಂದು ಸ್ಥಿರ ಪ್ರತಿಜ್ಞೆಯನ್ನು ಮಾಡುತ್ತೇನೆ.</verse>
				<verse number="11">ಆ ಪ್ರತಿಜ್ಞೆ ಏನೆಂದರೆ - ಇನ್ನು ಮೇಲೆ ನಾನು ಪ್ರಾಣಿಗಳನ್ನೆಲ್ಲಾ ಜಲಪ್ರಳಯದಿಂದ ನಾಶಮಾಡುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಪ್ರಳಯವು ಬರುವುದೇ ಇಲ್ಲ.”</verse>
				<verse number="12">ದೇವರು ಮತ್ತೆ ಹೇಳಿದ್ದೇನೆಂದರೆ - “ನಾನು ನಿಮ್ಮನ್ನೂ ನಿಮ್ಮ ಸಂಗಡವಿರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಿಗೆ ಮಾಡುವ ಈ ಪ್ರತಿಜ್ಞೆಗೆ</verse>
				<verse number="13">ಮೇಘಗಳಲ್ಲಿ ನಾನಿಟ್ಟಿರುವ ಮಳೆಬಿಲ್ಲೇ ಗುರುತು. ನನಗೂ ಭೂಪ್ರಾಣಿಗಳಿಗೂ ಆದ ಒಡಂಬಡಿಕೆಗೆ ಇದೇ ಕುರುಹು.</verse>
				<verse number="14">ನಾನು ಜಗದ ಮೇಲೆ ಮೇಘಗಳನ್ನು ಕವಿಸುವಾಗ ಆ ಬಿಲ್ಲು ಮೇಘಗಳಲ್ಲಿ ಕಂಡುಬರುವುದು.</verse>
				<verse number="15">ಆಗ ನಿಮ್ಮನ್ನೂ ಎಲ್ಲ ಜೀವರಾಶಿಗಳನ್ನೂ ಕುರಿತು ನಾನು ಮಾಡಿದ ಪ್ರತಿಜ್ಞೆಯನ್ನು ನೆನೆಸಿಕೊಳ್ಳುತ್ತೇನೆ. ಇನ್ನು ಮುಂದೆ ಜಲ ಹೆಚ್ಚಿ ಭೂಪ್ರಾಣಿಗಳನ್ನೆಲ್ಲಾ ಹಾಳುಮಾಡುವ ಪ್ರಳಯ ಬರುವುದಿಲ್ಲ.</verse>
				<verse number="16">ಆ ಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲ ಜೀವಜಂತುಗಳಿಗೂ ಆದ ಶಾಶ್ವತ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುತ್ತೇನೆ,”</verse>
				<verse number="17">ಇದು ಅಲ್ಲದೆ ದೇವರು ನೋಹನಿಗೆ, “ನನಗೂ ಸಮಸ್ತ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು,” ಎಂದು ಹೇಳಿದರು.</verse>
				<verse number="18">ನಾವೆಯಿಂದ ಹೊರಟುಬಂದ ನೋಹನ ಮಕ್ಕಳು ಶೇಮ್, ಹಾಮ್, ಯೆಫೆತ್ ಎಂಬುವರು. (ಹಾಮನು ಕಾನಾನನ ತಂದೆ).</verse>
				<verse number="19">ಜಗದಲ್ಲೆಲ್ಲ ಹರಡಿಕೊಂಡಿರುವ ಜನರು ನೋಹನ ಈ ಮೂರು ಮಕ್ಕಳಿಂದಲೇ ಉತ್ಪತ್ತಿಯಾದುದು.</verse>
				<verse number="20">ನೋಹನು ವ್ಯವಸಾಯಗಾರ. ದ್ರಾಕ್ಷಿತೋಟ ಮಾಡುವುದನ್ನು ಪ್ರಾರಂಭಿಸಿದವನು ಅವನೇ.</verse>
				<verse number="21">ಒಮ್ಮೆ ಅವನು ಕುಡಿದು ಅಮಲೇರಿ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು.</verse>
				<verse number="22">ತನ್ನ ತಂದೆ ಬೆತ್ತಲೆಯಾಗಿರುವುದನ್ನು ಕಂಡ ಕಾನಾನನ ತಂದೆ ಹಾಮನು ಹೊರಗಿದ್ದ ಶೇಮ್, ಯೆಫೆತ್ ಸೋದರರಿಗೆ ತಿಳಿಸಿದನು.</verse>
				<verse number="23">ಅವರಿಬ್ಬರು ಬಂದು ಹೊದಿಕೆಯನ್ನು ತೆಗೆದುಕೊಂಡು, ಬೆನ್ನಿನ ಹಿಂದೆ ಹಾಕಿಕೊಂಡು, ಹಿಂದುಹಿಂದಕ್ಕೆ ನಡೆದುಬಂದು ತಂದೆಗೆ ಅದನ್ನು ಹೊದಿಸಿ ಅವನ ಮಾನವನ್ನು ಕಾಪಾಡಿದರು. ಅವರಿಬ್ಬರು ಹಿಮ್ಮುಖರಾಗಿ ಇದ್ದುದರಿಂದ ತಂದೆ ಬೆತ್ತಲೆಯಾಗಿದ್ದುದನ್ನು ನೋಡಲಿಲ್ಲ.</verse>
				<verse number="24">ನೋಹನಿಗೆ ಅಮಲು ಇಳಿದ ಮೇಲೆ ತನ್ನ ಕಿರಿಯ ಮಗ ಮಾಡಿದ್ದು ತಿಳಿಯಿತು. ಆಗ ಅವನು ಹೀಗೆಂದನು:</verse>
				<verse number="25">“ಶಾಪ ತಟ್ಟಲಿ ಕಾನಾನಿಗೆ ದಾಸಾನುದಾಸನಾಗಲಿ ಅವನು ತನ್ನ ಸೋದರರಿಗೆ”</verse>
				<verse number="26">\ಸ್ತೋತ್ರ, ಶೇಮನ ದೇವರಾದ ಸರ್ವೇಶ್ವರನಿಗೆ ದಾಸನಾಗಲಿ ಕಾನಾನನು ಶೇಮನಿಗೆ\</verse>
				<verse number="27">\ಅಭಿವೃದ್ಧಿಯನು ನೀಡಲಿ ದೇವರು ಯೆಫೆತನಿಗೆ ವಾಸವಾಗಿರಲಿವನು ಶೇಮನ ಗುಡಾರದೊಳಗೆ, ದಾಸನಾಗಿರಲಿ ಕಾನಾನನು ಯೆಫೆತನಿಗೆ”</verse>
				<verse number="28">ಜಲಪ್ರಳಯ ಮುಗಿದ ಮೇಲೆ ನೋಹನು 350 ವರ್ಷ ಬದುಕಿದ್ದನು.</verse>
				<verse number="29">ಸತ್ತಾಗ ಅವನಿಗೆ ಒಟ್ಟು 950 ವರ್ಷಗಳಾಗಿದ್ದವು.</verse>
			</chapter>
			<chapter number="10">
				<verse number="1">ನೋಹನ ಮಕ್ಕಳಾದ ಶೇಮ್, ಹಾಮ್ ಮತ್ತು ಯೆಫೆತರಿಗೆ ಜಲಪ್ರಳಯ ಮುಗಿದ ಮೇಲೆ ಮಕ್ಕಳಾದರು. ಅವರ ವಂಶಾವಳಿ ಇದು:</verse>
				<verse number="2">ಯೆಫೆತನ ಮಕ್ಕಳು ಇವರು - ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್.</verse>
				<verse number="3">ಗೋಮೆರನ ಮಕ್ಕಳು ಅಷ್ಕೆನಸ್, ರೀಫತ್ ಮತ್ತು ತೋಗರ್ಮ.</verse>
				<verse number="4">ಯಾವಾನನ ಮಕ್ಕಳು - ಎಲಿಷಾ, ಸ್ಪೇಯಿನ್ (ತಾರ್ಷಿಸ್), ಸೈಪ್ರಸ್ (ಕಿತ್ತೀಮ್) ಮತ್ತು ದೋದಾ ಎಂಬ ಸ್ಥಳದವರು. ಇವರು ಸಮುದ್ರದ ರೇವುಗಳಲ್ಲಿ ಹರಡಿಕೊಂಡರು.</verse>
				<verse number="5">ದೇಶ - ಭಾಷಾ - ಕುಲ - ಜನಾಂಗಗಳ ಪ್ರಕಾರ ಇವರೇ ಯೆಫೆತನ ವಂಶದವರು.</verse>
				<verse number="6">ಹಾಮನ ಮಕ್ಕಳು ಯಾರೆಂದರೆ - ಕೂಷ್, ಈಜಿಪ್ಟ್ (ಮಿಚ್ರಯಿಮ್) ಲಿಬಿಯಾ (ಪೂತ್) ಮತ್ತು ಕಾನಾನ್ ಎಂಬುವರು.</verse>
				<verse number="7">ಕೂಷನ ಮಕ್ಕಳು - ಸೆಬಾ, ಹವೀಲ, ಸಬ್ತಾ, ರಗ್ಮ, ಸಬ್ತಕಾ ಎಂಬ ಜನಾಂಗಗಳು. ರಗ್ಮ ಸಂತಾನದವರು -‍ ಶೆಬಾ, ದೆದಾನ್ ಎಂಬ ಜನಾಂಗಗಳು.</verse>
				<verse number="8">ಕೂಷನು ನಿಮ್ರೋದನನ್ನು ಪಡೆದನು. ಇವನೇ ಪರಾಕ್ರಮದಲ್ಲಿ ಮೊದಲನೆಯ ಭೂರಾಜ.</verse>
				<verse number="9">ದೇವರ ದೃಷ್ಟಿಯಲ್ಲಿ ದಿಟ್ಟ ಬೇಟೆಗಾರ. \ಪ್ರಭು ನಿನ್ನನ್ನು ನಿಮ್ರೋದನಂಥ ದಿಟ್ಟಬೇಟೆಗಾರನಾಗಿಸಲಿ\ ಎಂಬ ನಾಣ್ನುಡಿ ಇಂದಿಗೂ ಇದೆ.</verse>
				<verse number="10">ಬಾಬಿಲೋನಿಯ (ಶಿನಾರ್) ನಾಡಿನಲ್ಲಿರುವ ಯೆರೆಕ್, ಅಕ್ಕದ್ ಬಾಬಿಲೋನ್ ಕಲ್ನೇ ಈ ಎಲ್ಲ ಪಟ್ಟಣಗಳೇ ಅವನ ರಾಜ್ಯದ ಮೂಲ ಪಟ್ಟಣಗಳು.</verse>
				<verse number="11">ಅವನು ಆ ನಾಡಿನಿಂದ ಹೊರಟು ಅಸ್ಸೀರಿಯಾ ನಾಡಿಗೆ ಬಂದು ನಿನೆವೆ, ರಹೋಬೋತೀರ್, ಕೆಲಹ ಎಂಬ ಪಟ್ಟಣಗಳನ್ನೂ</verse>
				<verse number="12">ನಿನೆವೆಗೂ ಮಹಾ ಪಟ್ಟಣವಾದ ಕೆಲಹಕ್ಕೂ ನಡುವೆ ಇರುವ ರೆಸೆನ್ ಪಟ್ಟಣವನ್ನೂ ಕಟ್ಟಿಸಿದನು.</verse>
				<verse number="13">ಈಜಿಪ್ಟ್ (ಮಿಚ್ರಯಿಮ್)ನವರಿಂದ ಲಿಡ್ಯರೂ ಅನಾಮ್ಯರೂ ಲೆಹಾಬ್ಯರೂ ನಪ್ತುಹ್ಯರೂ ಪತ್ರುಸ್ಯರೂ</verse>
				<verse number="14">ಕಸ್ಲುಹ್ಯರೂ ಕೆಪ್ತೋರ್ಯರೂ ಹುಟ್ಟಿದರು. ಕಸ್ಲುಹ್ಯರಿಂದ ಬಂದವರು ಫಿಲಿಷ್ಟಿಯರು.</verse>
				<verse number="15">ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತ್ ಹುಟ್ಟಿದನು.</verse>
				<verse number="16">ಇದಲ್ಲದೆ ಯೆಬೂಸಿಯರೂ ಅಮೋರಿಯರೂ ಗಿರ್ಗಾಷಿಯರೂ</verse>
				<verse number="17">ಹಿವ್ವಿಯರೂ ಅರ್ಕಿಯರೂ ಸೀನಿಯರೂ.</verse>
				<verse number="18">ಅರ್ವಾದಿಯರೂ ಚೆಮಾರಿಯರೂ ಹಮಾತಿಯರೂ ಕಾನಾನನಿಂದ ಹುಟ್ಟಿದರು. ಕಾಲಕ್ರಮೇಣ ಈ ಕಾನಾನ್ ಕುಲಗಳವರು ಹರಡಿಕೊಂಡರು.</verse>
				<verse number="19">ಕಾನಾನ್ಯರ ನಾಡು ಸೀದೋನ್ ಪಟ್ಟಣದಿಂದ ಗೆರಾರಿಗೆ ಹೋಗುವ ದಾರಿಯಲ್ಲಿ ಇರುವ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಆದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಿಗೆ ಹೋಗುವ ದಾರಿಯಲ್ಲಿದ್ದ ಲೆಷಾ ಊರಿನವರೆಗೂ ಹಬ್ಬಿತ್ತು.</verse>
				<verse number="20">ಕುಲ - ಭಾಷಾ - ದೇಶ - ಜನಾಂಗಗಳ ಪ್ರಕಾರ ಇವರೇ ಹಾಮನ ವಂಶದವರು.</verse>
				<verse number="21">ಹಿಬ್ರಿಯರೆಲ್ಲರಿಗೆ ಮೂಲಪುರುಷನೂ ಯೆಫೆತನ ಅಣ್ಣನೂ ಆಗಿದ್ದ ಶೇಮನಿಗು ಸಹ ಮಕ್ಕಳಾದರು.</verse>
				<verse number="22">ಶೇಮನ ಮಕ್ಕಳು ಇವರು - ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್ ಮತ್ತು ಆರಾಮ್.</verse>
				<verse number="23">ಆರಾಮ್ ಸಂತಾನದವರು - ಊಸ್, ಹೂಲ್, ಗೆತೆರ್ ಮತ್ತು ಮಷ್.</verse>
				<verse number="24">ಅರ್ಪಕ್ಷದನಿಂದ‍ ಶೆಲಹನೂ ಶೆಲಹನಿಂದ ಎಬರನೂ ಹುಟ್ಟಿದರು.</verse>
				<verse number="25">ಎಬರನಿಗೆ ಇಬ್ಬರು ಮಕ್ಕಳು. ಒಬ್ಬನಿಗೆ ಪೆಲೆಗೆಂಬ ಹೆಸರು. ಇವನ ಕಾಲದಲ್ಲೇ ಭೂಜನದ ವಿಭಜನೆ ಆದುದು. ಅವನ ತಮ್ಮನ ಹೆಸರು ಯೊಕ್ತಾನ್.</verse>
				<verse number="26">ಯೊಕ್ತಾನನ ಮಕ್ಕಳು ಇವರು - ಆಲ್ಮೋದಾದ್, ಶೆಲಿಪ್, ಹಜರ್ಮಾವೆತ್, ಯೆರೆಹ.</verse>
				<verse number="27">ಹದೋರಾಮ್, ಊಜಾಲ್, ದೀಕ್ಲಾ,</verse>
				<verse number="28">ಓಬಾಲ್, ಅಬೀಮಯೇಲ್, ಶೆಬಾ,</verse>
				<verse number="29">ಓಫೀರ್, ಹವೀಲ, ಯೋಬಾಬ್ ಎಂಬ ಸ್ಥಳಗಳವರು. ಈ ಕುಲಗಳೆಲ್ಲ ಯೋಕ್ತಾನನಿಂದ ಹುಟ್ಟಿದವು.</verse>
				<verse number="30">ಇವರ ನಿವಾಸವು ಮೇಶಾ ನಾಡು ಮೊದಲುಗೊಂಡು ಪೂರ್ವಕ್ಕಿರುವ ಸೆಫಾರ್ ಎಂಬ ಬೆಟ್ಟದವರೆಗೂ ಹರಡಿತ್ತು.</verse>
				<verse number="31">ಕುಲ, ಭಾಷೆ, ಜನಾಂಗಗಳ ಪ್ರಕಾರ ಇವರೇ ಶೇಮನ ವಂಶದವರು.</verse>
				<verse number="32">ಸಂತತಿ - ಜನಾಂಗಗಳ ಪ್ರಕಾರ ಇವರೇ ನೋಹನ ವಂಶದವರು. ಜಲಪ್ರಳಯವಾದ ನಂತರ ಭೂಮಿಯ ಮೇಲೆ ಹರಡಿಕೊಂಡ ಜನಾಂಗಗಳು ಇವರೇ.</verse>
			</chapter>
			<chapter number="11">
				<verse number="1">ಭೂಜನರೆಲ್ಲರಿಗೂ ಇದ್ದುದು ಒಂದೇ ಭಾಷೆ, ಒಂದೇ ನುಡಿ.</verse>
				<verse number="2">ಅವರು ಪೂರ್ವದಿಕ್ಕಿಗೆ ಪ್ರಯಾಣಮಾಡುತ್ತಾ ಇದ್ದಾಗ ಬಾಬಿಲೋನಿಯ ಕಾಡಿನ ಬಯಲು ಸೀಮೆ ಸಿಕ್ಕಿತು. ಅವರು ಅಲ್ಲೇ ನೆಲೆಸಲು ತೊಡಗಿದರು.</verse>
				<verse number="3">“ಬನ್ನಿ, ಒಳ್ಳೊಳ್ಳೆ ಸುಟ್ಟ ಇಟ್ಟಿಗೆಗಳನ್ನು ಮಾಡೋಣ;</verse>
				<verse number="4">ಒಂದು ಪಟ್ಟಣವನ್ನು ಕಟ್ಟೋಣ; ಆಕಾಶವನ್ನು ಮುಟ್ಟುವಂಥ ಗೋಪುರವನ್ನು ನಿರ್ಮಿಸಿ ಪ್ರಖ್ಯಾತಿ ಪಡೆಯೋಣ. ಹೀಗೆ ಮಾಡಿದರೆ ನಾವು ಜಗದಲ್ಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಿರುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಕಟ್ಟುವಾಗ ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ ಗಾರೆಗೆ (ಸುಣ್ಣಕ್ಕೆ) ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.</verse>
				<verse number="5">ನರಮಾನವರು ಕಟ್ಟುತ್ತಿದ್ದ ಆ ಪಟ್ಟಣವನ್ನು ಹಾಗೂ ಗೋಪುರವನ್ನು ನೋಡಲು ಸರ್ವೇಶ್ವರ ಸ್ವಾಮಿ ಇಳಿದು ಬಂದರು.</verse>
				<verse number="6">ನೋಡಿದ ಮೇಲೆ, “ಇವರು ಒಂದೇ ಜನಾಂಗ; ಇವರೆಲ್ಲರಿಗೂ ಒಂದೇ ಭಾಷೆ. ಇದು ಇವರು ಕೈಗೊಂಡಿರುವ ಕಾರ್ಯದ ಪ್ರಾರಂಭ ಮಾತ್ರ. ಮುಂದಕ್ಕೆ ಇವರು ಏನು ಬೇಕಾದರೂ ಮಾಡಿಯಾರು!</verse>
				<verse number="7">ನಾವು ಹೋಗಿ ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿಗೊಳಿಸೋಣ,” ಎಂದರು.</verse>
				<verse number="8">ಅಂತೆಯೇ ಮಾಡಿ ಅವರನ್ನು ಅಲ್ಲಿಂದ ಜಗದೆಲ್ಲೆಡೆಗೆ ಚದರಿಸಿಬಿಟ್ಟರು. ಜನರು ಆ ಪಟ್ಟಣ ಕಟ್ಟುವುದನ್ನು ನಿಲ್ಲಿಸಿಬಿಟ್ಟರು</verse>
				<verse number="9">ಹೀಗೆ ಸರ್ವೇಶ್ವರ ಇಡೀ ಜಗತ್ತಿನ ಭಾಷೆಯನ್ನು ಗಲಿಬಿಲಿಗೊಳಿಸಿ ಅಲ್ಲಿಂದ ಜನರನ್ನು ಜಗದೆಲ್ಲೆಡೆಗೆ ಚದರಿಸಿದ ಕಾರಣ ಆ ಪಟ್ಟಣಕ್ಕೆ ‘ಬಾಬೆಲೋನ್‍’ ಎಂದು ಹೆಸರಾಯಿತು.</verse>
				<verse number="10">ಶೇಮನ ವಂಶವೃಕ್ಷ; ಜಲಪ್ರಳಯ ಕಳೆದು ಎರಡು ವರ್ಷಗಳಾದ ಮೇಲೆ ಶೇಮನಿಗೆ ಅರ್ಪಕ್ಷದನು ಹುಟ್ಟಿದನು. ಆಗ ಶೇಮನಿಗೆ 100 ವರ್ಷ ವಯಸ್ಸು.</verse>
				<verse number="11">ಅನಂತರ ಶೇಮನು ಗಂಡುಹೆಣ್ಣು ಮಕ್ಕಳನ್ನು ಪಡೆದು 500 ವರ್ಷ ಬದುಕಿದ್ದನು.</verse>
				<verse number="12">ಮೂವತ್ತೈದು ವರ್ಷದವನಾಗಿದ್ದ ಅರ್ಪಕ್ಷದನಿಗೆ ಶೆಲಹನು ಹುಟ್ಟಿದನು.</verse>
				<verse number="13">ಅನಂತರ ಅರ್ಪಕ್ಷದನು ಗಂಡುಹೆಣ್ಣು ಮಕ್ಕಳನ್ನು ಪಡೆದು ನಾನೂರ ಮೂರು ವರ್ಷ ಬದುಕಿದ್ದನು.</verse>
				<verse number="14">ಮೂವತ್ತು ವರ್ಷದವನಾಗಿದ್ದ ಶೆಲಹನಿಗೆ ಎಬರನು ಹುಟ್ಟಿದನು.</verse>
				<verse number="15">ಅನಂತರ ಗಂಡುಹೆಣ್ಣು ಮಕ್ಕಳನ್ನು ಪಡೆದು 403 ವರ್ಷ ಬದುಕಿದ್ದನು.</verse>
				<verse number="16">ಮೂವತ್ತನಾಲ್ಕು ವರ್ಷದವನಾಗಿದ್ದ ಎಬರನಿಗೆ ಪೆಲೆಗನು ಹುಟ್ಟಿದನು.</verse>
				<verse number="17">ಅನಂತರ ಗಂಡುಹೆಣ್ಣು ಮಕ್ಕಳನ್ನು ಪಡೆದು 430 ವರ್ಷ ಬದುಕಿದ್ದನು.</verse>
				<verse number="18">ಮೂವತ್ತು ವರ್ಷದವನಾಗಿದ್ದ ಪೆಲೆಗನಿಗೆ ರೆಗೂವನು ಹುಟ್ಟಿದನು.</verse>
				<verse number="19">ಅನಂತರ ಪೆಲೆಗನು ಗಂಡುಹೆಣ್ಣು ಮಕ್ಕಳನ್ನು ಪಡೆದು 290 ವರ್ಷ ಬದುಕಿದ್ದನು.</verse>
				<verse number="20">ಮೂವತ್ತೆರಡು ವರ್ಷದವನಾಗಿದ್ದ ರೆಗೂವನಿಗೆ ಸೆರೂಗನು ಹುಟ್ಟಿದನು.</verse>
				<verse number="21">ಅನಂತರ ರೆಗೂವನು ಗಂಡುಹೆಣ್ಣು ಮಕ್ಕಳನ್ನು ಪಡೆದು 207 ವರ್ಷ ಬದುಕಿದ್ದನು.</verse>
				<verse number="22">ಮೂವತ್ತು ವರ್ಷದವನಾಗಿದ್ದ ಸೆರೂಗನಿಗೆ ನಾಹೋರನು ಹುಟ್ಟಿದನು.</verse>
				<verse number="23">ಅನಂತರ ಸೆರೂಗನು ಗಂಡುಹೆಣ್ಣು ಮಕ್ಕಳನ್ನು ಪಡೆದು 200 ವರ್ಷ ಬದುಕಿದ್ದನು.</verse>
				<verse number="24">ಇಪ್ಪತ್ತೊಂಭತ್ತು ವರ್ಷದವನಾಗಿದ್ದ ನಾಹೋರನಿಗೆ ತೆರಹನು ಹುಟ್ಟಿದನು.</verse>
				<verse number="25">ಅನಂತರ ನಾಹೋರನು ಗಂಡುಹೆಣ್ಣು ಮಕ್ಕಳನ್ನು ಪಡೆದು 190 ವರ್ಷ ಬದುಕಿದ್ದನು.</verse>
				<verse number="26">ಎಪ್ಪತ್ತು ವರ್ಷದವನಾದ ತೆರಹನಿಗೆ ಅಬ್ರಾಮ, ನಾಹೋರ ಮತ್ತು ಹಾರಾನ ಎಂಬ ಮಕ್ಕಳು ಹುಟ್ಟಿದರು.</verse>
				<verse number="27">ತೆರಹನ ವಂಶವೃಕ್ಷ: ತೆರಹನಿಗೆ ಅಬ್ರಾಮ, ನಾಹೋರ, ಹಾರಾನ ಇವರು ಹುಟ್ಟಿದರು. ಹಾರಾನನಿಗೆ ಲೋಟನು ಹುಟ್ಟಿದನು.</verse>
				<verse number="28">ಹಾರಾನನು, ತನ್ನ ಜನ್ಮಭೂಮಿಯಲ್ಲಿ, ಬಾಬಿಲೋನಿನ ಊರ್ ಎಂಬ ಪಟ್ಟಣದಲ್ಲಿ, ತನ್ನ ತಂದೆಯಾದ ತೆರಹನು ಜೀವದಿಂದಿರುವಾಗಲೇ ಸತ್ತನು.</verse>
				<verse number="29">ಅಬ್ರಾಮನು ಮತ್ತು ನಾಹೋರನು ಮದುವೆಮಾಡಿಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆ ಹಾರಾನನ ಮಗಳು; ಹಾರಾನನು ಮಿಲ್ಕಳಿಗು ಹಾಗೂ ಇಸ್ಕಳಿಗು ತಂದೆ.</verse>
				<verse number="30">ಸಾರಯಳು ಬಂಜೆ, ಆಕೆಗೆ ಮಕ್ಕಳಿರಲಿಲ್ಲ.</verse>
				<verse number="31">ತೆರಹನು ತನ್ನ ಮಗನಾದ ಅಬ್ರಾಮನನ್ನು ಮತ್ತು ತನಗೆ ಮೊಮ್ಮಗನೂ ಹಾರಾನನಿಗೆ ಮಗನೂ ಆದ ಲೋಟನನ್ನೂ ಹಾಗು ತನಗೆ ಸೊಸಯೂ ಅಬ್ರಾಮನಿಗೆ ಹೆಂಡತಿಯೂ ಆದ ಸಾರಯಳನ್ನೂ ಕರೆದುಕೊಂಡು ಬಾಬಿಲೋನಿನ ಊರ್ ಎಂಬ ಪಟ್ಟಣವನ್ನು ಬಿಟ್ಟು ಕಾನಾನ್ ನಾಡಿಗೆ ತೆರಳಿದನು. ಅವರು ಹಾರಾನ್ ಎಂಬ ಪಟ್ಟಣವನ್ನು ತಲುಪಿ ಅಲ್ಲಿ ವಾಸಮಾಡಿಕೊಂಡರು.</verse>
				<verse number="32">ತೆರಹನು ಅಲ್ಲಿ ಮೃತನಾದನು. ಆಗ ಅವನಿಗೆ ಇನ್ನೂರ ಐದು ವರ್ಷವಾಗಿತ್ತು.</verse>
			</chapter>
			<chapter number="12">
				<verse number="1">ಸರ್ವೇಶ್ವರ‍ಸ್ವಾಮಿ ಅಬ್ರಾಮನಿಗೆ ಹೀಗೆಂದರು - “ನೀನು ನಿನ್ನ ಸ್ವಂತ ನಾಡನ್ನೂ ಬಂಧುಬಳಗದವರನ್ನೂ ತವರು ಮನೆಯನ್ನೂ ಬಿಟ್ಟು ನಾನು ತೋರಿಸುವ ನಾಡಿಗೆ ಹೊರಟುಹೋಗು.</verse>
				<verse number="2">ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.</verse>
				<verse number="3">\ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.”</verse>
				<verse number="4">ಸರ್ವೇಶ್ವರ ಹೀಗೆಂದು ಹೇಳಿದ ಮೇಲೆ ಅಬ್ರಾಮನು ಹೊರಟನು. ಲೋಟನು ಅವನ ಸಂಗಡವೆ ಹೋದನು. ಆ ಹಾರಾನ್ ಪಟ್ಟಣವನ್ನು ಬಿಟ್ಟು ಹೊರಟಾಗ ಅಬ್ರಾಮನಿಗೆ ಎಪ್ಪತ್ತೈದು ವರ್ಷಗಳಾಗಿದ್ದವು.</verse>
				<verse number="5">ತನ್ನ ಹೆಂಡತಿ ಸಾರಯಳನ್ನು, ತನ್ನ ತಮ್ಮನ ಮಗನಾದ ಲೋಟನನ್ನು, ತಾನು ಮತ್ತು ಲೋಟನು ಹಾರಾನಿನಲ್ಲಿ ಗಳಿಸಿದ ಆಸ್ತಿಪಾಸ್ತಿಯನ್ನು ಹಾಗು ದಾಸದಾಸಿಯರನ್ನು ತೆಗೆದುಕೊಂಡು ಹೋಗಿ ಕಾನಾನ್ ನಾಡನ್ನು ಸೇರಿದನು.</verse>
				<verse number="6">ಆ ನಾಡಿನಲ್ಲಿ ಸಂಚರಿಸುತ್ತಾ ಅಬ್ರಾಮನು ಶೆಕೆಮ್ ಪುಣ್ಯಕ್ಷೇತ್ರದಲ್ಲಿರುವ ‘ಮೋರೆ’ ಎಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ಆ ನಾಡಿನಲ್ಲಿ ವಾಸವಾಗಿದ್ದರು.</verse>
				<verse number="7">ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.</verse>
				<verse number="8">ಬಳಿಕ ಅವನು ಅಲ್ಲಿಂದ ದಕ್ಷಿಣಕ್ಕೆ ಹೊರಟು ಬೇತೇಲಿಗೆ ಪೂರ್ವಕ್ಕಿರುವ ಗುಡ್ಡಗಾಡಿಗೆ ಬಂದು ಗುಡಾರ ಹಾಕಿ ನೆಲಸಿದನು. ಪಶ್ಚಿಮಕ್ಕೆ ಬೇತೇಲೂ ಪೂರ್ವಕ್ಕೆ ಆಯಿ ಎಂಬ ಊರು ಇದ್ದವು. ಅಲ್ಲೂ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಅವರ ನಾಮಸ್ಮರಣೆಮಾಡಿ ಆರಾಧಿಸಿದನು.</verse>
				<verse number="9">ತರುವಾಯ ಅಲ್ಲಿಂದ ಮುಂದ ಮುಂದಕ್ಕೆ ಸಾಗುತ್ತಾ ಕಾನಾನ್ ನಾಡಿನ ದಕ್ಷಿಣ ಪ್ರಾಂತ್ಯಕ್ಕೆ ಬಂದನು.</verse>
				<verse number="10">ಕಾನಾನ್ ನಾಡಿನಲ್ಲಿ ಕ್ಷಾಮ ತಲೆದೋರಿತು. ಅದು ಘೋರವಾಗಿದ್ದುದರಿಂದ ಅಬ್ರಾಮನು ಕೆಲವು ಕಾಲ ಈಜಿಪ್ಟಿನಲ್ಲಿರಲು ಅಲ್ಲಿಗೆ ಇಳಿದುಹೋದನು.</verse>
				<verse number="11">ಈಜಿಪ್ಟನ್ನು ಪ್ರವೇಶಿಸುವುದಕ್ಕೆ ಮುಂಚೆಯೆ ತನ್ನ ಹೆಂಡತಿ ಸಾರಯಳಿಗೆ, “ನೀನು ಬಲು ಚೆಲುವಾದ ಹೆಣ್ಣು;</verse>
				<verse number="12">ಈಜಿಪ್ಟಿನವರು ನಿನ್ನನ್ನು ನೋಡಿ, ನೀನು ನನ್ನ ಹೆಂಡತಿಯಾಗಿರಬಹುದೆಂದು ಊಹಿಸಿ, ನನ್ನನ್ನು ಕೊಂದು ನಿನ್ನನ್ನು ಜೀವದಿಂದ ಉಳಿಸಾರು.</verse>
				<verse number="13">ಆದಕಾರಣ ನೀನು ನನಗೆ ತಂಗಿಯೆಂದೇ ಅವರಿಗೆ ಹೇಳು. ಆಗ ನಿನ್ನ ನಿಮಿತ್ತ ನನಗೆ ಸತ್ಕಾರ ದೊರಕುವುದು; ನಿನ್ನ ದೆಸೆಯಿಂದ ನನ್ನ ಪ್ರಾಣ ಉಳಿಯುವುದು,” ಎಂದು ತಿಳಿಸಿದನು.</verse>
				<verse number="14">ಅಬ್ರಾಮನು ಈಜಿಪ್ಟಿಗೆ ಬಂದಾಗ ಈಜಿಪ್ಟಿನವರು ಅವನ ಸಂಗಡ ಇದ್ದ ಹೆಣ್ಣು ಬಹಳ ಚೆಲುವೆಯೆಂದುಕೊಂಡರು</verse>
				<verse number="15">ಫರೋಹನ ಪದಾಧಿಕಾರಿಗಳು ಆಕೆಯನ್ನು ನೋಡಿಬಂದು ಆಕೆಯ ಚೆಲುವನ್ನು ಅವನ ಮುಂದೆ ಹೊಗಳಿದರು.</verse>
				<verse number="16">ಅವನು ಆಕೆಯನ್ನು ಅರಮನೆಗೆ ಕರೆಸಿದನು. ಆಕೆಯ ನಿಮಿತ್ತ ಅಬ್ರಾಮನಿಗೆ ಸತ್ಕಾರ ದೊರಕಿತು; ಕುರಿಮೇಕೆಗಳು, ದನಕರುಗಳು, ಗಂಡುಹೆಣ್ಣು ಕತ್ತೆಗಳು, ದಾಸದಾಸಿಯರು ಹಾಗು ಒಂಟೆಗಳು ದೊರೆತವು.</verse>
				<verse number="17">ಆದರೆ ಅಬ್ರಾಮನ ಹೆಂಡತಿಯನ್ನು ಕರೆಸಿಕೊಂಡ ಕಾರಣ ಫರೋಹನಿಗೂ ಮತ್ತು ಅವನ ಮನೆಯವರಿಗೂ ಸರ್ವೇಶ್ವರ ದೊಡ್ಡ ದೊಡ್ಡ ಗಂಡಾಂತರಗಳನ್ನು ಬರಮಾಡಿದರು.</verse>
				<verse number="18">ಆಗ ಫರೋಹನು ಅಬ್ರಾಮನನ್ನು ಕರೆಸಿ, “ನೀನು ಮಾಡಿರುವುದೇನು?</verse>
				<verse number="19">ಆಕೆ ನಿನ್ನ ಹೆಂಡತಿಯೆಂದು ನನಗೇಕೆ ತಿಳಿಸಲಿಲ್ಲ? ತಂಗಿಯೆಂದು ಏಕೆ ಹೇಳಿದೆ? ಹಾಗೆ ಹೇಳಿದ್ದರಿಂದಲೆ ಆಕೆ ನನಗೆ ಹೆಂಡತಿಯಾಗಲೆಂದು ಕರೆಸಿಕೊಂಡೆ. ಇಗೋ ನಿನ್ನ ಹೆಂಡತಿ! ಕರೆದುಕೊಂಡು ಇಲ್ಲಿಂದ ತೆರಳು,” ಎಂದು ಆಜ್ಞಾಪಿಸಿದನು.</verse>
				<verse number="20">ಅವನ ಅಪ್ಪಣೆ ಪಡೆದ ಸೇವಕರು ಅಬ್ರಾಮನನ್ನೂ ಅವನ ಹೆಂಡತಿಯನ್ನೂ ಅವನಿಗಿದ್ದ ಎಲ್ಲದರ ಸಮೇತ ಅಲ್ಲಿಂದ ಕಳಿಸಿಬಿಟ್ಟರು.</verse>
			</chapter>
			<chapter number="13">
				<verse number="1">ಅಬ್ರಾಮನು ತನ್ನದುದನ್ನೆಲ್ಲಾ ತೆಗೆದುಕೊಂಡು ಹೆಂಡತಿ ಮತ್ತು ಲೋಟನ ಸಂಗಡ ಈಜಿಪ್ಟನ್ನು ಬಿಟ್ಟು ಕಾನಾನ್ ನಾಡಿನ ದಕ್ಷಿಣ ಪ್ರಾಂತ್ಯಕ್ಕೆ ಬಂದನು.</verse>
				<verse number="2">ಈಗ ಅವನಿಗೆ ಪಶುಪ್ರಾಣಿಗಳಿದ್ದವು. ಬೆಳ್ಳಿಬಂಗಾರವಿತ್ತು. ಅವನೀಗ ಘನಧನವಂತನಾಗಿದ್ದನು.</verse>
				<verse number="3">ಅಲ್ಲಿಂದ ಮುಂದೆ ಪ್ರಯಾಣ ಮಾಡುತ್ತಾ</verse>
				<verse number="4">ಬೇತೇಲಿಗೂ ಆಯಿ ಎಂಬ ಊರಿಗೂ ನಡುವೆ ತಾನು ಹಿಂದೆ ಗುಡಾರ ಹಾಕಿ ಬಲಿಪೀಠವನ್ನು ಕಟ್ಟಿದ ಕ್ಷೇತ್ರವನ್ನು ತಲುಪಿದನು. ಅಲ್ಲಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ ಆರಾಧಿಸಿದನು.</verse>
				<verse number="5">ಅಬ್ರಾಮನ ಜೊತೆಯಲ್ಲಿದ್ದ ಲೋಟನಿಗೆ ಕುರಿಮಂದೆಗಳೂ ದನಕರುಗಳೂ ಗುಡಾರಬಿಡಾರಗಳೂ ಇದ್ದವು.</verse>
				<verse number="6">ಈ ಕಾರಣ ಅವರಿಬ್ಬರ ಜೀವನಕ್ಕೆ ಅಲ್ಲಿ ಸ್ಥಳ ಸಾಲದೆಹೋಯಿತು. ಇಬ್ಬರಿಗೂ ಪಶುಪ್ರಾಣಿಗಳು ಹೇರಳವಾಗಿದ್ದುದರಿಂದ ಒಂದೇ ಸ್ಥಳದಲ್ಲಿ ವಾಸವಾಗಿರಲು ಆಗಲಿಲ್ಲ.</verse>
				<verse number="7">ಅಬ್ರಾಮನ ದನಕಾಯುವವರಿಗೂ ಲೋಟನ ದನಕಾಯುವವರಿಗೂ ಜಗಳ ಬೇರೆ. ಇದೂ ಅಲ್ಲದೆ, ಆ ಕಾಲದಲ್ಲಿ ಕಾನಾನ್ಯರೂ ಪೆರಿಜೀಯರೂ ಅದೇ ನಾಡಿನಲ್ಲಿ ವಾಸವಾಗಿದ್ದರು.</verse>
				<verse number="8">ಆದುದರಿಂದ ಅಬ್ರಾಮನು ಲೋಟನಿಗೆ ಹೀಗೆಂದನು: “ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು. ನಾವು ಬಳಗದವರು.</verse>
				<verse number="9">ನಾಡೆಲ್ಲಾ ನಿನ್ನ ಕಣ್ಮುಂದಿದೆ. ದಯವಿಟ್ಟು ನನ್ನನ್ನು ಬಿಟ್ಟು ಬೇರೆ ಹೋಗು. ನೀನು ಎಡಗಡೆಗೆ ಹೋದರೆ ನಾನು ಬಲಗಡೆಗೆ ಹೋಗುತ್ತೇನೆ. ನೀನು ಬಲಗಡೆಗೆ ಹೋದರೆ ನಾನು ಎಡಗಡೆಗೆ ಹೋಗುತ್ತೇನೆ\.</verse>
				<verse number="10">ಲೋಟನು ಕಣ್ಣೆತ್ತಿ ನೋಡಿದನು. ಜೋರ್ಡನ್ ನದಿಯ ಸುತ್ತಲಿನ ಪ್ರದೇಶ ಚೋಗರೂರಿನವರೆಗೂ ಎಲ್ಲೆಲ್ಲೂ ನೀರಾವರಿ ಆಗಿರುವುದು ಕಾಣಿಸಿತು. ಸರ್ವೇಶ್ವರ, ಸೋದೋಮ್ - ಗೊಮೋರ ಪಟ್ಟಣಗಳನ್ನು ವಿನಾಶ ಮಾಡುವುದಕ್ಕೆ ಮುಂಚೆ ಈ ಪ್ರಾಂತ್ಯವು ಸರ್ವೇಶ್ವರನ ಉದ್ಯಾನ ವನದಂತೆ, ಈಜಿಪ್ಟಿನ ದೇಶದಂತೆ, ನೀರಿನ ಸೌಕರ್ಯಪಡೆದಿತ್ತು.</verse>
				<verse number="11">ಆದುದರಿಂದ ಲೋಟನು ಜೋರ್ಡನ್ ನದಿಯ ಸುತ್ತಲಿನ ಪ್ರದೇಶವನ್ನು ಆರಿಸಿಕೊಂಡು ಪೂರ್ವದಿಕ್ಕಿನ ಕಡೆಗೆ ಹೊರಟನು. ಹೀಗೆ ಅವರಿಬ್ಬರೂ ಬೇರೆ ಬೇರೆ ಆದರು.</verse>
				<verse number="12">ಅಬ್ರಾಮನು ಕಾನಾನ್ ನಾಡಿನಲ್ಲೇ ವಾಸಮಾಡಿದನು. ಲೋಟನು ಜೋರ್ಡನ್ ನದಿಯ ಸುತ್ತಣ ಊರುಗಳಲ್ಲಿ ವಾಸಮಾಡುತ್ತಾ ಸೋದೋಮ್‍ಗೆ ಸಮೀಪದಲ್ಲಿ ಗುಡಾರಹಾಕಿದನು.</verse>
				<verse number="13">ಸೋದೋಮಿನ ಪಟ್ಟಣದವರು ಬಹಳ ದುಷ್ಟರು; ಪ್ರಭುವಿನ ದೃಷ್ಟಿಯಲ್ಲಿ ಕಡುಪಾಪಿಗಳು.</verse>
				<verse number="14">ಲೋಟನು ಅಬ್ರಾಮನನ್ನು ಬಿಟ್ಟುಹೋದ ಬಳಿಕ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ, “ನೀನು ಇರುವ ಸ್ಥಳದಿಂದಲೇ ದಕ್ಷಿಣೋತ್ತರ ಪೂರ್ವಪಶ್ಚಿಮಗಳ ಕಡೆಗೆ ಕಣ್ಣೆತ್ತಿ ನೋಡು.</verse>
				<verse number="15">ನಿನ್ನ ಕಣ್ಣಿಗೆ ಕಾಣಿಸುವ ಈ ಪ್ರಾಂತ್ಯವನ್ನೆಲ್ಲಾ ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾಗಿ ಕೊಡುತ್ತೇನೆ.</verse>
				<verse number="16">ನಿನ್ನ ಸಂತಾನದವರನ್ನು ಭೂಮಿಯ ಧೂಳಿನಷ್ಟು ಅಸಂಖ್ಯಾತರನ್ನಾಗಿ ಮಾಡುತ್ತೇನೆ. ಭೂಮಿಯ ಧೂಳನ್ನು ಲೆಕ್ಕಿಸಲು ಸಾಧ್ಯವಾದಲ್ಲಿ ನಿನ್ನ ಸಂತಾನದವರನ್ನು ಲೆಕ್ಕಿಸಲು ಸಾಧ್ಯವಾದೀತು.</verse>
				<verse number="17">ನೀನೆದ್ದು ಈ ನಾಡಿನ ಉದ್ದಗಲಕ್ಕೂ ತಿರುಗಾಡು; ಇದನ್ನು ನಾನು ನಿನಗೆ ಕೊಡುತ್ತೇನೆ, ಎಂದು ಹೇಳಿದರು.</verse>
				<verse number="18">ಅಬ್ರಾಮನು ಅಲ್ಲಿಂದ ಹೊರಟು ಅಲ್ಲಲ್ಲಿ ಗುಡಾರ ಹಾಕಿಸಿಕೊಳ್ಳುತ್ತಾ, ಹೆಬ್ರೋನಿನಲ್ಲಿರುವ ಮಮ್ರೆವೃಕ್ಷಗಳ ತೋಪಿಗೆ ಬಂದು ವಾಸಮಾಡಿದನು. ಸರ್ವೇಶ್ವರ ಸ್ವಾಮಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.</verse>
			</chapter>
			<chapter number="14">
				<verse number="1">ಆ ದಿನಗಳಲ್ಲಿ ಬಾಬೆಲೋನಿನ ಅರಸ ಅಮ್ರಾಫೆಲನು, ಎಲ್ಲಸಾರಿನ ಅರಸ ಅರಿಯೋಕನು, ಎಲಾಮಿನ ಅರಸ ಕೆದೊರ್ಲಗೋಮರನು ಮತ್ತು ಗೋಯಿಮದ ಅರಸ ತಿದ್ಗಾಲನು - ಈ ನಾಲ್ವರು</verse>
				<verse number="2">ಈಗ ಲವಣ ಸಮುದ್ರ ಎನಿಸಿಕೊಳ್ಳುವ ಸಿದ್ದೀಮ್ ತಗ್ಗುಪ್ರದೇಶದಲ್ಲಿ ಒಂದುಗೂಡಿದ್ದ ಸೊದೋಮಿನ ಅರಸ ಬೆರಗ, ಗೊಮೋರದ ಅರಸ ಬಿರ್ಶಗ, ಅದ್ಮಾಹದ ಅರಸ ಶಿನಾಬ, ಚೆಬೋಯಿಮನ ಅರಸ ಶೆಮೇಬರ, ಬೆಲಗಿನ (ಅಂದರೆ ಚೋಗರದ) ಅರಸ - ಈ ಐವರೊಡನೆ ಯುದ್ಧಮಾಡಿದರು.</verse>
				<verse number="3"></verse>
				<verse number="4">ಬೆರಗ ಮೊದಲಾದ ಈ ಐದು ಅರಸರು ಹನ್ನೆರಡು ವರ್ಷಕಾಲ ಕೆದೊರ್ಲಗೋಮರನಿಗೆ ಅಧೀನರಾಗಿ ಇದ್ದರು. ಹದಿಮೂರನೆಯ ವರ್ಷದಲ್ಲಿ ತಿರುಗಿಬಿದ್ದರು.</verse>
				<verse number="5">ಹದಿನಾಲ್ಕನೆಯ ವರ್ಷದಲ್ಲಿ ಕೆದೊರ್ಲಗೋಮರನೂ ಮತ್ತು ಅವನಿಗೆ ಸೇರಿದ ರಾಜರೂ ಬಂದು ಅಷ್ಟರೋತ್ ಕರ್ನಯಿಮ್ ಎಂಬಲ್ಲಿ ರೆಫಾಯರನ್ನೂ ಹಾಮ್ ಎಂಬಲ್ಲಿ ಏಮಿಯರನ್ನೂ ಸೋಲಿಸಿದರು.</verse>
				<verse number="6">ಇದಲ್ಲದೆ ಎದೋಮ್ ಗುಡ್ಡ ಪ್ರಾಂತ್ಯದಲ್ಲಿ ವಾಸವಾಗಿದ್ದ ಹೋರಿಯರನ್ನು ಅಲ್ಲೇ ಸೋಲಿಸಿ, ಮರಳುಗಾಡಿಗೆ ಹತ್ತಿರವಿರುವ ಏಲ್ಪಾರಾನಿನವರೆಗೂ ಹಿಂದಟ್ಟಿದರು.</verse>
				<verse number="7">ಅನಂತರ ಎನ್ಮಿಷ್ಪಾಟ್ ಎನ್ನಲ್ಪಟ್ಟ ಕಾದೇಶ್‍ಗೆ ಹಿಂದಿರುಗಿ ಬಂದು ಅಮಾಲೇಕ್ಯರ ಸಮಸ್ತ ನಾಡನ್ನು ಮತ್ತು ಹಚಚೋನ್ ತಾಮರಿನಲ್ಲಿ ವಾಸವಾಗಿದ್ದ ಅಮೋರಿಯರನ್ನು ಜಯಿಸಿದರು.</verse>
				<verse number="8">ಆಗ ಸೊದೋಮ್, ಗೊಮೋರ, ಅದ್ಮಾಹ, ಚೆಬೋಯಿಮ್, ಚೋಗರ್ ಎಂಬ ಬೇಲಗ್ ಈ ಪಟ್ಟಣಗಳ ರಾಜರು ಹೊರಟು ಅವರಿಗೆದುರಾಗಿ, ಅಂದರೆ</verse>
				<verse number="9">ಏಲಾಮನ ಅರಸ ಕೆದೊರ್ಲಗೋಮರ್, ಗೋಯಿಮದ ಅರಸ ತಿದ್ಗಾಲ, ಬಾಬಿಲೋನಿನ ಅರಸ ಅಮ್ರಾಫೆಲ, ಎಲ್ಲಸಾರಿನ ಅರಸ ಅರಿಯೋಕ ಇವರಿಗೆ ವಿರೋಧವಾಗಿ ಸಿದ್ದೀಮ್ ತಗ್ಗುಪ್ರದೇಶದಲ್ಲಿ ತಮ್ಮ ದಂಡನ್ನು ನಿಲ್ಲಿಸಿದರು. ಹೀಗೆ ನಾಲ್ಕು ಮಂದಿ ರಾಜರು ಐದು ಮಂದಿ ರಾಜರನ್ನು ಎದುರಿಸಿದರು.</verse>
				<verse number="10">ಆ ಸಿದ್ದೀಮ್ ತಗ್ಗಿನಲ್ಲಿ ಕಲ್ಲರಗಿನ ಕೆಸರುಗುಣಿಗಳು ಬಹಳವಿದ್ದವು. ಸೊದೋಮ್ ಗೊಮೋರದ ರಾಜರಕಡೆಯವರು ಹಿಮ್ಮೆಟ್ಟಿ ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು. ಉಳಿದವರು ಬೆಟ್ಟಗಳಿಗೆ ಓಡಿಹೋದರು.</verse>
				<verse number="11">ಗೆದ್ದ ಆ ನಾಲ್ಕು ರಾಜರು ಸೊದೋಮ್ ಮತ್ತು ಗೊಮೋರ ಪಟ್ಟಣಗಳನ್ನು ಸೂರೆಮಾಡಿದರು. ಅವುಗಳಲ್ಲಿದ್ದ ಆಸ್ತಿಪಾಸ್ತಿಯನ್ನೂ ದವಸಧಾನ್ಯಗಳನ್ನೂ ದೋಚಿಕೊಂಡು ಹೋದರು.</verse>
				<verse number="12">ಸೊದೋಮಿನಲ್ಲಿ ವಾಸವಾಗಿದ್ದ ಅಬ್ರಾಮನ ತಮ್ಮನ ಮಗ ಲೋಟನನ್ನು ಅವನ ಆಸ್ತಿಪಾಸ್ತಿ ಸಹಿತ ಹಿಡಿದುಕೊಂಡು ಹೋದರು.</verse>
				<verse number="13">ತಪ್ಪಿಸಿಕೊಂಡು ಓಡಿಹೋದವರಲ್ಲಿ ಒಬ್ಬ ವ್ಯಕ್ತಿ ಹಿಬ್ರಿಯನಾದ ಅಬ್ರಾಮನ ಬಳಿಗೆ ಬಂದು ನಡೆದುದನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ತೋಪಿನ ಬಳಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು. ಇವರಿಗೂ ಅಬ್ರಾಮನಿಗೂ ಒಪ್ಪಂದವಿತ್ತು.</verse>
				<verse number="14">ಅಬ್ರಾಮನು ತನ್ನ ತಮ್ಮನ ಮಗ ಸೆರೆಗೆ ಸಿಕ್ಕಿರುವುದನ್ನು ಕೇಳಿ ತನ್ನ ಮನೆಯಲ್ಲೇ ಹುಟ್ಟಿ ಬೆಳೆದು ಸುಶಿಕ್ಷಿತರಾದ 318 ಮಂದಿ ಆಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಂಡು ಹೊರಟನು. ಈ ನಾಲ್ಕು ಮಂದಿ ರಾಜರನ್ನು ದಾನೂರಿನವರೆಗೆ ಹಿಂದಟ್ಟಿದನು.</verse>
				<verse number="15">ಅಲ್ಲಿ ತನ್ನ ದಂಡನ್ನು ಇಬ್ಭಾಗವಾಗಿ ವಿಂಗಡಿಸಿ ರಾತ್ರಿವೇಳೆಯಲ್ಲಿ ಶತ್ರುಗಳ ಮೇಲೆ ಬಿದ್ದು ಸೋಲಿಸಿದನು. ಅಲ್ಲದೆ ದಮಸ್ಕಸ್ ಪಟ್ಟಣದ ಉತ್ತರಕ್ಕಿರುವ ಹೋಬಾ ಊರಿನತನಕ ಹಿಂದಟ್ಟಿದನು.</verse>
				<verse number="16">ಆ ರಾಜರು ಅಪಹರಿಸಿದ್ದ ಎಲ್ಲ ವಸ್ತುಗಳನ್ನು ಕಿತ್ತುಕೊಂಡನು. ತನ್ನ ತಮ್ಮನ ಮಗನಾದ ಲೋಟನನ್ನು ಬಿಡುಗಡೆಮಾಡಿದನು; ಅವನ ಆಸ್ತಿಪಾಸ್ತಿಯನ್ನು, ಸೆರೆಯಲ್ಲಿದ್ದ ಮಹಿಳೆಯರನ್ನು ಮತ್ತು ಇತರರನ್ನು ಬಿಡಿಸಿಕೊಂಡು ಹಿಂದಿರುಗಿದನು.</verse>
				<verse number="17">ಅಬ್ರಾಮನು ಕೆದೊರ್ಲಗೋಮರನನ್ನೂ ಅವನೊಂದಿಗಿದ್ದ ರಾಜರನ್ನೂ ಸೋಲಿಸಿ ಬಂದಾಗ ಸೊದೋಮಿನ ಅರಸನು ಅವನನ್ನು ಶಾವೆ ತಗ್ಗಿನಲ್ಲಿ (ಅದಕ್ಕೆ ಅರಸನ ತಗ್ಗು ಎಂಬ ಹೆಸರೂ ಉಂಟು) ಭೇಟಿಯಾಗಲು ಬಂದನು.</verse>
				<verse number="18">ಸಾಲೇಮಿನ ಅರಸನೂ ಪರಾತ್ಪರ ದೇವರ ಯಾಜಕನೂ ಆಗಿದ್ದ ಮೆಲ್ಕಿಸದೇಕನು ಸಹ ಅಲ್ಲಿಗೆ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಅರ್ಪಿಸಿ ಅಬ್ರಾಮನಿಗೆ ಇಂತೆಂದು ಆಶೀರ್ವಾದ ಮಾಡಿದನು:</verse>
				<verse number="19">“ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಆಶೀರ್ವಾದ ಅಬ್ರಾಮನಿಗಿರಲಿ; ನಿನ್ನ ಶತ್ರುಗಳನ್ನು ನಿನ್ನ ಕೈವಶಮಾಡಿದ ಆ ಪರಾತ್ಪರ ದೇವರಿಗೆ ಸ್ತೋತ್ರವಾಗಲಿ!”</verse>
				<verse number="20">ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಮೆಲ್ಕಿಸದೇಕನಿಗೆ ಕೊಟ್ಟನು.</verse>
				<verse number="21">ಸೊದೋಮಿನ ಅರಸನು ಅಬ್ರಾಮನಿಗೆ, “ನೀನು ಬಿಡಿಸಿ ತಂದ ಜನರನ್ನು ನನಗೆ ಕೊಡು; ಆಸ್ತಿಯನ್ನು ನೀನೇ ಇಟ್ಟುಕೊ,” ಎಂದನು.</verse>
				<verse number="22">ಅದಕ್ಕೆ ಅಬ್ರಾಮನು, “ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ:</verse>
				<verse number="23">ನಿನಗೆ ಸೇರಿದವುಗಳಲ್ಲಿ ಯಾವುದನ್ನೂ, ಒಂದು ದಾರವನ್ನಾಗಲಿ, ಕೆರದ ಬಾರನ್ನಾಗಲಿ ನಾನು ತೆಗೆದುಕೊಳ್ಳುವುದಿಲ್ಲ. ‘ನನ್ನಿಂದ ಅಬ್ರಾಮನು ಐಶ್ವರ್ಯವಂತನಾದ’ ಎಂದು ಹೇಳಿಕೊಳ್ಳುವುದಕ್ಕೂ ನಿನಗೆ ಆಸ್ಪದ ಇರಬಾರದು.</verse>
				<verse number="24">ನನಗೆ ಏನೂ ಬೇಡ. ಆಳುಗಳು ತಿಂದದ್ದು ಸಾಕು. ನನ್ನ ಜೊತೆಗರರಾದ ಅನೇರ, ಎಷ್ಕೋಲ ಮತ್ತು ಮಮ್ರೆ ಅವರಿಗೆ ಬರತಕ್ಕ ಪಾಲು ಮಾತ್ರ ಅವರಿಗೆ ಸೇರಲಿ,” ಎಂದು ಹೇಳಿದನು.</verse>
			</chapter>
			<chapter number="15">
				<verse number="1">ಈ ಘಟನೆಗಳೆಲ್ಲ ನಡೆದ ಮೇಲೆ ಅಬ್ರಾಮನಿಗೆ ಒಂದು ದಿವ್ಯದರ್ಶನ ಆಯಿತು. ಅದರಲ್ಲಿ ಸರ್ವೇಶ್ವರ ಸ್ವಾಮಿಯ ಈ ವಾಣಿ ಕೇಳಿಸಿತು: “ಅಬ್ರಾಮನೇ ಭಯಪಡಬೇಡ, ನಿನ್ನನ್ನು ರಕ್ಷಿಸುವ ಕವಚ ನಾನೇ, ಘನವಾದ ಬಹುಮಾನ ಸಿಗುವುದು ನಿನಗೆ\.</verse>
				<verse number="2">ಅದಕ್ಕೆ ಪ್ರತ್ಯುತ್ತರವಾಗಿ ಅಬ್ರಾಮನು - “ಸ್ವಾಮಿ ಸರ್ವೇಶ್ವರಾ, ನನಗೇ ಏನು ಕೊಟ್ಟರೇನು? ನಾನು ಪುತ್ರಸಂತಾನವಿಲ್ಲದವನು. ನನ್ನ ಮನೆಮಾರುಗಳಿಗೆ ಉತ್ತರಾಧಿಕಾರಿ ದಮಸ್ಕದ ಎಲೀಯೆಜರನೇ ಹೊರತು ಮತ್ತಾರೂ ಇಲ್ಲ;</verse>
				<verse number="3">ನೀವು ನನಗೆ ಮಕ್ಕಳನ್ನು ಕೊಟ್ಟಿಲ್ಲ. ನನ್ನ ಮನೆದಾಸನೇ ನನಗೆ ಉತ್ತರಾಧಿಕಾರಿ,” ಎಂದನು.</verse>
				<verse number="4">ಮತ್ತೆ ಸ್ವಾಮಿಯ ವಾಣಿ - “ಇಲ್ಲ, ಅವನು ಉತ್ತರಾಧಿಕಾರಿಯಾಗುವುದಿಲ್ಲ, ನಿನ್ನಿಂದ ಹುಟ್ಟಿದವನೇ ನಿನಗೆ ಉತ್ತರಾಧಿಕಾರಿ ಆಗುತ್ತಾನೆ” ಎಂದಿತು.</verse>
				<verse number="5">ಸರ್ವೇಶ್ವರ ಬಳಿಕ ಅಬ್ರಾಮನನ್ನು ಹೊರಗೆ ಕರೆತಂದು, “ಆಕಾಶದ ಕಡೆಗೆ ನೋಡು. ಆ ನಕ್ಷತ್ರಗಳನ್ನು ನಿನ್ನಿಂದಾದರೆ ಲೆಕ್ಕಿಸು. ನಿನ್ನ ಸಂತಾನವು ಅಷ್ಟು ಅಸಂಖ್ಯಾತವಾಗುವುದು!” ಎಂದರು.</verse>
				<verse number="6">ಅಬ್ರಾಮನು ಸರ್ವೇಶ್ವರ ಸ್ವಾಮಿಯಲ್ಲಿ ವಿಶ್ವಾಸವಿಟ್ಟನು. ಅವರು ಅವನ ವಿಶ್ವಾಸವೇ ಸರಿಯಾದ ಸಂಬಂಧವೆಂದು ಪರಿಗಣಿಸಿದರು.</verse>
				<verse number="7">ಸವೇಶ್ವರ ಬಳಿಕ ಅಬ್ರಾಮನಿಗೆ ಇಂತೆಂದರು: “ಈ ನಾಡನ್ನು ನಿನಗೆ ಸೊತ್ತಾಗಿ ಕೊಡಬೇಕೆಂದು ಬಾಬಿಲೋನಿನಲ್ಲಿರುವ ಊರ್ ಪಟ್ಟಣದಿಂದ ನಿನ್ನನ್ನು ಬರಮಾಡಿದ ಸರ್ವೇಶ್ವರ ನಾನೇ,” ಎಂದರು.</verse>
				<verse number="8">ಅದಕ್ಕೆ ಅಬ್ರಾಮನು, “ಸರ್ವೇಶ್ವರಾ, ಇದು ನನ್ನ ಸೊತ್ತು ಎಂದು ತಿಳಿದುಕೊಳ್ಳುವುದು ಹೇಗೆ?” ಎಂದನು.</verse>
				<verse number="9">ಸರ್ವೇಶ್ವರ ಪ್ರತ್ಯುತ್ತರವಾಗಿ, “ನೀನು ಮೂರು ಮೂರು ವರ್ಷದ ಒಂದು ಕಡಸನ್ನು, ಒಂದು ಆಡನ್ನು, ಒಂದು ಟಗರನ್ನು, ಒಂದು ಬೆಳವಕ್ಕಿಯನ್ನು ಹಾಗು ಒಂದು ಮರಿಪಾರಿವಾಳವನ್ನು ತೆಗೆದುಕೊಂಡು ಬಾ,” ಎಂದರು.</verse>
				<verse number="10">ಅಬ್ರಾಮನು ಅವುಗಳನ್ನೆಲ್ಲಾ ತೆಗೆದುಕೊಂಡು ಬಂದು ಆ ಪ್ರಾಣಿಗಳನ್ನು ಕಡಿದು, ಎರಡೆರಡು ಹೋಳುಮಾಡಿ, ತುಂಡಿಗೆ ತುಂಡನ್ನು ಎದುರಾಗಿಟ್ಟನು. ಪಕ್ಷಿಗಳನ್ನು ಮಾತ್ರ ಕಡಿಯಲಿಲ್ಲ.</verse>
				<verse number="11">ಆ ಪ್ರಾಣಿಗಳ ತುಂಡುಗಳ ಮೇಲೆ ರಣಹದ್ದುಗಳು ಎರಗಿದಾಗ ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು.</verse>
				<verse number="12">ಹೊತ್ತು ಮುಳುಗುತ್ತಿದ್ದಾಗ ಅಬ್ರಾಮನಿಗೆ ಗಾಢನಿದ್ರೆ ಹತ್ತಿತು. ಭೀಕರವಾದ ಕಾರ್ಗತ್ತಲು ಅವನನ್ನು ಕವಿಯಿತು.</verse>
				<verse number="13">ಆಗ ಅಬ್ರಾಮನಿಗೆ ಸರ್ವೇಶ್ವರ, “ಇದನ್ನು ನೀನು ಸ್ಪಷ್ಟವಾಗಿ ತಿಳಿದುಕೊಳ್ಳಬೇಕು: ನಿನ್ನ ಸಂತತಿಯವರು ಅನ್ಯ ನಾಡಿಗೆ ಆಗಂತುಕರಂತೆ ಹೋಗುವರು; ಆ ನಾಡಿಗರಿಗೆ ಗುಲಾಮರಾಗುವರು; ನಾನೂರು ವರ್ಷ ಅಲ್ಲಿಯವರ ಶೋಷಣೆಗೆ ಗುರಿಯಾಗುವರು.</verse>
				<verse number="14">ಆದರೆ ಅವರನ್ನು ಗುಲಾಮರನ್ನಾಗಿಸಿಕೊಳ್ಳುವ ರಾಷ್ಟ್ರವನ್ನು ನಾನು ದಂಡಿಸುವೆನು. ಬಳಿಕ ಬಿಡುಗಡೆ ಹೊಂದಿ ಅಧಿಕ ಆಸ್ತಿವಂತರಾಗಿ ಹಿಂತಿರುಗುವರು.</verse>
				<verse number="15">ನೀನಂತೂ ಹಣ್ಣುಹಣ್ಣು ಮುದುಕನಾಗಿ ಶವಸಂಸ್ಕಾರವನ್ನು ಪಡೆಯುವೆ; ಶಾಂತಿ ಸಮಾಧಾನದಿಂದ ನಿನ್ನ ಪಿತೃಗಳನ್ನು ಸೇರುವೆ.</verse>
				<verse number="16">ನಿನ್ನ ಸಂತತಿಯವರು ನಾಲ್ಕನೆಯ ತಲಾಂತರವಾದ ಮೇಲೆ ಇಲ್ಲಿಗೆ ಮರಳಿ ಬರುವರು. ಏಕೆಂದರೆ ಅಮೋರಿಯರ ಪಾಪಕ್ರಮ ಇನ್ನೂ ಮಾಗಿಲ್ಲ,” ಎಂದರು.</verse>
				<verse number="17">ಹೊತ್ತು ಮುಳುಗಿ ಕಾರ್ಗತ್ತಲಾದಾಗ ಇಗೋ, ಹೊಗೆಯಾಡುವ ಒಲೆಯೊಂದು ಹಾಗು ಉರಿಯುವ ದೀವಿಟಿಗೆಯೊಂದು ಕಾಣಿಸಿಕೊಂಡು ಆ ತುಂಡುಗಳ ನಡುವೆ ಹಾದುಹೋದವು.</verse>
				<verse number="18">ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”</verse>
				<verse number="19">ಅಂದರೆ. ಕೇನಿಯರು, ಕೆನಿಜೀಯರು, ಕದ್ಮೋನಿಯರು,</verse>
				<verse number="20">ಹಿತ್ತಿಯರು, ಪೆರಿಜೀಯರು, ರೆಫಾಯರು,</verse>
				<verse number="21">ಆಮೋರಿಯರು, ಕಾನಾನ್ಯರು, ಗಿರ್ಗಾಷಿಯರು ಹಾಗು ಯೆಬೂಸಿಯರು ವಾಸವಾಗಿರುವ ಪ್ರಾಂತಗಳಿಂದ ಕೂಡಿರುವ ಈ ನಾಡನ್ನು ಕೊಡುವೆನು,” ಎಂದು ವಾಗ್ದಾನ ಮಾಡಿದರು.</verse>
			</chapter>
			<chapter number="16">
				<verse number="1">ಅಬ್ರಾಮನ ಹೆಂಡತಿ ಸಾರಯಳಿಗೆ ಮಕ್ಕಳಿರಲಿಲ್ಲ. ಆಕೆಗೆ ಈಜಿಪ್ಟ್ ದೇಶದವಳಾದ ಹಾಗರಳೆಂಬ ಒಬ್ಬ ದಾಸಿ ಇದ್ದಳು.</verse>
				<verse number="2">ಎಂದೇ ಸಾರಯಳು ಅಬ್ರಾಮನಿಗೆ, “ನೋಡಿ, ನನಗೇನೋ ಸರ್ವೇಶ್ವರ ಸ್ವಾಮಿ ಮಕ್ಕಳನ್ನು ದಯಪಾಲಿಸಲಿಲ್ಲ; ನೀವು ನನ್ನ ದಾಸಿಯನ್ನು ಸೇರಬೇಕು. ಬಹುಶಃ ಅವಳ ಮೂಲಕವಾದರೂ ನನಗೆ ಮಕ್ಕಳಾದೀತು,” ಎಂದು ಹೇಳಿದಳು. ಅಬ್ರಾಮನು ಆಕೆಯ ಮಾತಿಗೆ ಸಮ್ಮತಿಸಿದನು.</verse>
				<verse number="3">ಹೀಗೆ ಹತ್ತು ವರ್ಷ ಕಾನಾನ್ ನಾಡಿನಲ್ಲಿ ವಾಸಮಾಡಿದ ಮೇಲೆ ಅಬ್ರಾಮನ ಹೆಂಡತಿ ಸಾರಯಳು ಈಜಿಪ್ಟಿನ ಹಾಗರಳೆಂಬ ದಾಸಿಯನ್ನು ತನ್ನ ಗಂಡನಿಗೆ ಉಪಪತ್ನಿಯಾಗಿ ಒಪ್ಪಿಸಿದಳು.</verse>
				<verse number="4">ಅಬ್ರಾಮನು ಹಾಗರಳನ್ನು ಕೂಡಿದನು. ಅವಳು ಗರ್ಭಿಣಿಯಾದಳು. ತಾನು ಗರ್ಭಿಣಿಯಾದೆನೆಂದು ತಿಳಿದ ಅವಳು, ತನ್ನ ಯಜಮಾನಿಯನ್ನೇ ತಾತ್ಸಾರ ಮಾಡತೊಡಗಿದಳು.</verse>
				<verse number="5">ಆಗ ಸಾರಯಳು ಅಬ್ರಾಮನಿಗೆ, “ನನಗೆ ಅನ್ಯಾಯವಾಗುತ್ತಿದೆ; ಇದಕ್ಕೆ ನೀವೇ ಹೊಣೆ, ನನ್ನ ದಾಸಿಯನ್ನು ನಿಮಗೆ ಉಪಪತ್ನಿಯಾಗಿ ಕೊಟ್ಟೆನಷ್ಟೆ; ಇವಳೋ, ತಾನು ಗರ್ಭಿಣಿಯಾದೆನೆಂದು ತಿಳಿದದ್ದೆ, ನನ್ನನ್ನು ತಾತ್ಸಾರ ಮಾಡುತ್ತಿದ್ದಾಳೆ; ಈಗ ಸರ್ವೇಶ್ವರ ಸ್ವಾಮಿಯೇ ನಿಮಗೂ ನನಗೂ ನ್ಯಾಯ ತೀರಿಸಬೇಕು,” ಎಂದು ದೂರಿದಳು.</verse>
				<verse number="6">ಅದಕ್ಕೆ ಅಬ್ರಾಮನು, “ನಿನ್ನ ದಾಸಿ ನಿನ್ನ ಕೈಯಲ್ಲೇ ಇದ್ದಾಳೆ. ನಿನಗಿಷ್ಟ ಬಂದಂತೆ ಮಾಡು,” ಎಂದುಬಿಟ್ಟನು. ಬಳಿಕ ಸಾರಯಳು ಕೊಡುತ್ತಿದ್ದ ಕಿರುಕುಳವನ್ನು ತಾಳಲಾರದೆ ಹಾಗರಳು ಓಡಿಹೋದಳು.</verse>
				<verse number="7">ಮರಳುಗಾಡಿನಲ್ಲಿ ಶೂರಿಗೆ ಹೋಗುವ ಹಾದಿಪಕ್ಕದಲ್ಲಿದ್ದ ಒಂದು ಒರತೆಯ ಬಳಿ ಸ್ವಾಮಿಯ ದೂತನು ಅವಳನ್ನು ಕಂಡನು.</verse>
				<verse number="8">“ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತಿರುವೆ?” ಎಂದು ವಿಚಾರಿಸಿದನು. “ನನ್ನ ಯಜಮಾನಿ ಸಾರಯಳ ಬಳಿಯಿಂದ ಓಡಿಹೋಗುತ್ತಿದ್ದೇನೆ,” ಎಂದು ಉತ್ತರಕೊಟ್ಟಳು.</verse>
				<verse number="9">ಅದಕ್ಕೆ ಆ ದೂತನು, “ನಿನ್ನ ಯಜಮಾನಿಯ ಬಳಿಗೆ ಹಿಂತಿರುಗು, ಅವಳಿಗೆ ತಗ್ಗಿ ನಡೆದುಕೊ,” ಎಂದು ತಿಳಿಸಿದನು.</verse>
				<verse number="10">ಅದೂ ಅಲ್ಲದೆ ಸ್ವಾಮಿಯ ದೂತನು, “ನಿನ್ನ ಸಂತಾನವನ್ನು ಲೆಕ್ಕಿಸಲಾಗದಷ್ಟು ದೊಡ್ಡದಾಗಿಸುವೆನು”, ಎಂದು ಹೇಳಿ ಇಂತೆಂದನು:</verse>
				<verse number="11">ಹುಟ್ಟುವನು ಮಗನೊಬ್ಬನು ಗರ್ಭಿಣಿಯಾದ ನಿನಗೆ ಇಷ್ಮಾಯೇಲೆಂಬ ಹೆಸರನು ಇಡು ಅವನಿಗೆ ಕಾರಣ - ಸರ್ವೇಶ್ವರ ಕಿವಿಗೊಟ್ಟಿಹನು ನಿನ್ನ ಮೊರೆಗೆ.</verse>
				<verse number="12">ಬಾಳುವವನು ಕಾಡುಗತ್ತೆಯಂತೆ ಎತ್ತುವನು ಕೈಯನು ಎಲ್ಲರ ಮೇಲೆ, ಎತ್ತುವರೆಲ್ಲರು ಕೈ ಅವನ ಮೇಲೆ ಬಾಳುವನು ಸೋದರರಿಗೆ ಎದುರು ಬದುರಾಗೆ.”</verse>
				<verse number="13">ಹಾಗರಳು, “ನನ್ನನ್ನು ನೋಡುವಾತ ದೇವರನ್ನು ನಾನಿಲ್ಲೇ ನೋಡಿಬಿಟ್ಟೆನಲ್ಲಾ!” ಎಂದುಕೊಂಡು ತನ್ನ ಸಂಗಡ ಮಾತನಾಡಿದ ಸರ್ವೇಶ್ವರ ಸ್ವಾಮಿಗೆ, “ಎಲ್ಲವನ್ನು ನೋಡುವಾತ ದೇವರು\ ಎಂದು ಹೆಸರಿಟ್ಟಳು.</verse>
				<verse number="14">ಈ ಕಾರಣ ಅಲ್ಲಿದ್ದ ಬಾವಿಗೆ “ಲಹೈರೋಯಿ” (ನನ್ನನ್ನು ನೋಡುವ ಜೀವಸ್ವರೂಪನ ಬಾವಿ) ಎಂದು ಹೆಸರಾಯಿತು.</verse>
				<verse number="15">ಹಾಗರಳು ಅಬ್ರಾಮನಿಗೆ ಒಬ್ಬ ಮಗನನ್ನು ಹೆತ್ತಳು. ಅಬ್ರಾಮನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಟ್ಟನು.</verse>
				<verse number="16">ಆಗ ಅಬ್ರಾಮನಿಗೆ ಎಂಬತ್ತಾರು ವರ್ಷವಾಗಿತ್ತು.</verse>
			</chapter>
			<chapter number="17">
				<verse number="1">ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.</verse>
				<verse number="2">ನಿನ್ನ ಸಂಗಡ ನಾನು ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ: ನಿನಗೆ ಅಧಿಕಾಧಿಕವಾದ ಸಂತತಿಯನ್ನು ಕೊಡುತ್ತೇನೆ,” ಎಂದರು.</verse>
				<verse number="3">ಅಬ್ರಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು.</verse>
				<verse number="4">ದೇವರು ಅವನಿಗೆ, “ನಾನು ನಿನಗೆ ವಾಗ್ದಾನ ಮಾಡಿ ಹೇಳುತ್ತೇನೆ: ನೀನು ಅನೇಕ ರಾಷ್ಟ್ರಗಳಿಗೆ ಮೂಲಪುರುಷನಾಗುವೆ.</verse>
				<verse number="5">ಇನ್ನು ಮುಂದೆ ನಿನಗೆ ‘ಅಬ್ರಾಮ’ ಎಂಬ ಹೆಸರಿರುವುದಿಲ್ಲ. ನಿನ್ನನ್ನು ನಾನು ಅನೇಕಾನೇಕ ರಾಷ್ಟ್ರಗಳಿಗೆ ಮೂಲಪುರುಷನನ್ನಾಗಿ ನೇಮಿಸುವುದರಿಂದ ನಿನಗೆ ‘ಅಬ್ರಹಾಮ’ ಎಂಬ ಹೆಸರಿರುವುದು.</verse>
				<verse number="6">ನಿನ್ನನ್ನು ಅತ್ಯಂತ ಫಲದಾಯಕ ಪುರುಷನನ್ನಾಗಿ ಮಾಡುತ್ತೇನೆ. ನಿನ್ನಿಂದ ರಾಷ್ಟ್ರಗಳೂ ರಾಜರುಗಳೂ ಉತ್ಪತ್ತಿಯಾಗುವರು.</verse>
				<verse number="7">ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.</verse>
				<verse number="8">ನೀನು ಪ್ರವಾಸವಾಗಿರುವ ಈ ಕಾನಾನ್ ನಾಡೆಲ್ಲವನ್ನು ನಿನಗೂ ನಿನ್ನ ಸಂತಾನಕ್ಕೂ ಶಾಶ್ವತವಾದ ಸೊತ್ತಾಗಿ ಕೊಡುತ್ತೇನೆ. ನಾನು ನಿಮ್ಮ ಕುಲದೇವರಾಗಿರುತ್ತೇನೆ.”</verse>
				<verse number="9">ಇದಲ್ಲದೆ ದೇವರು ಅಬ್ರಹಾಮನಿಗೆ ಹೀಗೆಂದು ಹೇಳಿದರು: “ನೀನು ಕೂಡ ನನ್ನ ಒಡಂಬಡಿಕೆಯನ್ನು ಕೈಗೊಂಡು ನಡೆಯಬೇಕು ನೀನು ಮಾತ್ರವಲ್ಲ, ನಿನ್ನ ಸಂತತಿಯವರು ತಲತಲಾಂತರಕ್ಕೂ ಅದನ್ನು ಕೈಗೊಂಡು ನಡೆಯಬೇಕು.</verse>
				<verse number="10">ನೀನೂ ನಿನ್ನ ಸಂತತಿಯವರೂ ಕೈಗೊಳ್ಳಬೇಕಾದ ನನ್ನ ಒಡಂಬಡಿಕೆ ಇದು: ನಿಮ್ಮಲ್ಲಿ ಪ್ರತಿಯೊಬ್ಬ ಗಂಡಸಿಗೂ ಸುನ್ನತಿಯಾಗಬೇಕು.</verse>
				<verse number="11">ನೀವು ನಿಮ್ಮ ಜನನಾಂಗದ ಮುಂದೊಗಲನ್ನು ಸುನ್ನತಿಮಾಡಿಸಿಕೊಳ್ಳಬೇಕು. ಅದೇ ನಿಮಗೂ ನನಗೂ ಆದ ಒಡಂಬಡಿಕೆಯ ಗುರುತು.</verse>
				<verse number="12">ಎಲ್ಲ ತಲಾಂತರಗಳಲ್ಲಿ ನಿಮ್ಮಲ್ಲಿರುವ ಪ್ರತಿಯೊಂದು ಗಂಡುಮಗುವಿಗೂ ಜೀತಗಾರರಿಗೂ ಮನೆಯಲ್ಲಿ ಹುಟ್ಟಿದ ಅಥವಾ ಅನ್ಯರಿಂದ ಕ್ರಯಕ್ಕೆ ಕೊಂಡುಕೊಂಡವರಿಗೂ, ಎಂಟು ದಿನಗಳ ವಯಸ್ಸಾದಾಗ ಸುನ್ನತಿ ಮಾಡಿಸಬೇಕು.</verse>
				<verse number="13">ಮನೆಯಲ್ಲಿ ಹುಟ್ಟಿದವನೇ ಆಗಿರಲಿ, ಕ್ರಯಕ್ಕೆ ಕೊಂಡುಕೊಂಡವನೇ ಆಗಿರಲಿ, ಪ್ರತಿ ಒಬ್ಬನಿಗೂ ತಪ್ಪದೆ ಸುನ್ನತಿಯಾಗಬೇಕು. ನಾನು ಮಾಡುವ ಒಡಂಬಡಿಕೆಯ ಗುರುತು ಹೀಗೆ ನಿಮ್ಮ ದೇಹದಲ್ಲಿ ಇದ್ದು ಶಾಶ್ವತವಾದ ಒಡಂಬಡಿಕೆಯನ್ನು ಸೂಚಿಸುವುದು.</verse>
				<verse number="14">ಸುನ್ನತಿ ಮಾಡಿಸಿಕೊಳ್ಳದ ಗಂಡಸು ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದವನಾದ ಕಾರಣ, ಅವನು ಕುಲದಿಂದ ಬಹಿಷ್ಕೃತನಾಗಬೇಕು.</verse>
				<verse number="15">ದೇವರುಅಬ್ರಹಾಮನಿಗೆ ಇನ್ನೂ ಹೇಳಿದ್ದು ಏನೆಂದರೆ: “ನೀನು ಇನ್ನು ಮುಂದೆ ನಿನ್ನ ಹೆಂಡತಿಯನ್ನು ಸಾರಯಳು ಎಂದು ಕರೆಯದೆ ಸಾರಳು ಎಂದು ಕರೆಯಬೇಕು.</verse>
				<verse number="16">ನಾನು ಆಕೆಯನ್ನು ಆಶೀರ್ವದಿಸಿದ್ದೇನೆ. ಆಕೆ ನಿನಗೊಬ್ಬ ಮಗನನ್ನು ಹೆರುವಳು. ನನ್ನ ಆಶೀರ್ವಾದ ಪಡೆದ ಆಕೆ ರಾಷ್ಟ್ರಗಳಿಗೆ ಮಾತೆಯಾಗುವಳು; ಆಕೆಯಿಂದ ರಾಷ್ಟ್ರಗಳೂ, ರಾಜರುಗಳೂ ಉತ್ಪತ್ತಿಯಾಗುವರು.”</verse>
				<verse number="17">ಅಬ್ರಹಾಮನು ಅಡ್ಡಬಿದ್ದು ಸಾಷ್ಟಾಂಗ ಪ್ರಣಾಮ ಮಾಡಿದನು. ಆದರೆ, \ನೂರು ವರ್ಷದವನಿಗೆ ಮಗ ಹುಟ್ಟುವುದುಂಟೆ? ತೊಂಬತ್ತು ವರ್ಷದವಳಾದ ಸಾರಳು ಹೆತ್ತಾಳೆ?” ಎಂದು ಅಬ್ರಹಾಮನು ಮನಸ್ಸಿನಲ್ಲೇ ನೆನೆದು ನಕ್ಕು ದೇವರಿಗೆ,</verse>
				<verse number="18">“ಇಷ್ಮಾಯೇಲನು ಇದ್ದಾನಲ್ಲವೆ? ನಿಮ್ಮ ಸಮ್ಮುಖದಲ್ಲಿ ಅವನು ಬಾಳಿದರೆ ಸಾಕಲ್ಲವೆ?” ಎಂದನು.</verse>
				<verse number="19">ಅದಕ್ಕೆ ದೇವರು, “ಇಲ್ಲ, ನಿನ್ನ ಹೆಂಡತಿ ಸಾರಳೇ ನಿನಗೊಂದು ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ನನ್ನ ಒಡಂಬಡಿಕೆಯನ್ನು ಅವನೊಂದಿಗೂ ಅವನ ಸಂತತಿಯೊಂದಿಗೂ ಚಿರವಾದ ಒಡಂಬಡಿಕೆಯಾಗಿ ಸ್ಥಿರಗೊಳಿಸುತ್ತೇನೆ.</verse>
				<verse number="20">ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ. ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತತಿಯನ್ನು ಕೊಡುತ್ತೇನೆ. ಅವನು ಹನ್ನೆರಡು ಮಂದಿ ಅಧಿಪತಿಗಳಿಗೆ ಮೂಲಪಿತನಾಗುವನು. ಅವನ ಸಂತತಿಯನ್ನು ದೊಡ್ಡ ರಾಷ್ಟ್ರವನ್ನಾಗಿ ಮಾಡುತ್ತೇನೆ.</verse>
				<verse number="21">ಆದರೆ ಆ ನನ್ನ ಒಡಂಬಡಿಕೆಯನ್ನು ಇಸಾಕನಲ್ಲಿಯೇ ಊರ್ಜಿತಗೊಳಿಸುತ್ತೇನೆ.</verse>
				<verse number="22">ಬರುವ ವರ್ಷ ಇದೇ ಕಾಲದಲ್ಲಿ ಸಾರಳು ಅವನನ್ನು ಹೆರುವಳು,” ಎಂದರು. ಇಷ್ಟನ್ನು ಮಾತಾಡಿ ಮುಗಿಸಿದ ಮೇಲೆ ದೇವರು ಅಬ್ರಹಾಮನಿಂದ ಅದೃಶ್ಯರಾದರು.</verse>
				<verse number="23">ಅದೇ ದಿನದಂದು ಅಬ್ರಹಾಮನು ದೇವರ ಅಪ್ಪಣೆಯ ಪ್ರಕಾರ ತನ್ನ ಮಗನಾದ ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಎಲ್ಲ ಗಂಡಸರಿಗೂ ಮನೆಯಲ್ಲಿ ಹುಟ್ಟಿದ ಹಾಗು ತಾನು ಕ್ರಯಕ್ಕೆ ಕೊಂಡುಕೊಂಡ ಜೀತದಾರರಿಗೂ ಸುನ್ನತಿಮಾಡಿಸಿದನು.</verse>
				<verse number="24">ಅಬ್ರಹಾಮನಿಗೆ ಸುನ್ನತಿ ಆದಾಗ ಅವನಿಗೆ ತೊಂಬತ್ತೊಂಬತ್ತು ವರ್ಷವಾಗಿತ್ತು.</verse>
				<verse number="25">ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನಿಗೆ ಹದಿಮೂರು ವರ್ಷ ವಯಸ್ಸು.</verse>
				<verse number="26">ಅಬ್ರಹಾಮನಿಗೂ ಅವನ ಮಗ ಇಷ್ಮಾಯೇಲನಿಗೂ ಒಂದೇ ದಿನದಲ್ಲಿ ಸುನ್ನತಿ ಆಯಿತು.</verse>
				<verse number="27">ಅವನ ಮನೆಯಲ್ಲಿದ್ದ ಗಂಡಸರೆಲ್ಲರಿಗೂ ಮನೆಯಲ್ಲಿ ಹುಟ್ಟಿದ ಹಾಗೂ ಅನ್ಯರಿಂದ ಕ್ರಯಕ್ಕೆ ಕೊಂಡುಕೊಂಡಿದ್ದ ಜೀತದಾರರಿಗೂ ಅವನೊಂದಿಗೆ ಸುನ್ನತಿಯಾಯಿತು.</verse>
			</chapter>
			<chapter number="18">
				<verse number="1">ಒಂದು ದಿನ ಅಬ್ರಹಾಮನು ಉರಿಬಿಸಿಲ ವೇಳೆಯಲ್ಲಿ ಮಮ್ರೋತೋಪಿನ ತನ್ನ ಗುಡಾರದ ಬಾಗಿಲಲ್ಲಿ ಕುಳಿತಿದ್ದನು. ಆಗ ಅವನಿಗೆ ಸರ್ವೇಶ್ವರ ಸ್ವಾಮಿಯ ದರ್ಶನವಾಯಿತು.</verse>
				<verse number="2">ಅವನು ಕಣ್ಣೆತ್ತಿ ನೋಡಿದಾಗ ಯಾರೋ ಮೂರು ಮಂದಿ ಪುರುಷರು ಹತ್ತಿರದಲ್ಲೇ ನಿಂತಿದ್ದರು. ಅವರನ್ನು ಎದುರುಗೊಳ್ಳಲು ಅಬ್ರಹಾಮನು ಕೂಡಲೆ ಗುಡಾರದ ಬಾಗಿಲಿನಿಂದ ಓಡಿಬಂದು, ತಲೆಬಾಗಿ ನಮಸ್ಕರಿಸಿ,</verse>
				<verse number="3">“ಸ್ವಾಮೀ, ದಯವಿರಲಿ, ದಾಸನ ಬಳಿಗೆ ದಯಮಾಡದೆ ಮುಂದೆ ಹೋಗಬೇಡಿ.</verse>
				<verse number="4">ನೀರು ತರಿಸಿಕೊಡುತ್ತೇನೆ, ಕಾಲುತೊಳೆದುಕೊಂಡು ಈ ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿ.</verse>
				<verse number="5">ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು. ದಾಸನಿರುವ ಸ್ಥಳದ ಹತ್ತಿರ ಹಾದುಹೋಗುತ್ತಿದ್ದೀರಲ್ಲವೇ?” ಎನ್ನಲು ಅವರು “ನೀನು ಹೇಳಿದಂತೆಯೇ ಆಗಲಿ,” ಎಂದರು.</verse>
				<verse number="6">ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ, ಬೇಗ ರೊಟ್ಟಿಗಳನ್ನು ಮಾಡು,” ಎಂದನು.</verse>
				<verse number="7">ಅನಂತರ ದನಗಳ ಹಟ್ಟಿಗೆ ಓಡಿಹೋಗಿ ಕೊಬ್ಬಿದ ಎಳೇ ಕರುವನ್ನು ತೆಗೆದು ಆಳಿನ ಕೈಗೆ ಕೊಟ್ಟನು. ಆಳು ಬೇಗನೆ ಅಡಿಗೆ ಮಾಡಿದನು.</verse>
				<verse number="8">ತರುವಾಯ ಅಬ್ರಹಾಮನು ಹಾಲು ಮೊಸರನ್ನು ಹಾಗು ಅಟ್ಟ ಮಾಂಸವನ್ನು ತೆಗೆದುಕೊಂಡು ಬಂದು ಆ ಮನುಷ್ಯರಿಗೆ ಬಡಿಸಿದನು. ಅವರು ಮರದ ಕೆಳಗೆ ಊಟಮಾಡಿ ಮುಗಿಸುವವರೆಗೂ ಅವನೇ ಹತ್ತಿರ ನಿಂತು ಉಪಚಾರ ಮಾಡಿದನು.</verse>
				<verse number="9">ಬಳಿಕ, “ನಿನ್ನ ಹೆಂಡತಿ ಸಾರಳು ಎಲ್ಲಿ?” ಎಂದು ಆ ಅತಿಥಿಗಳು ವಿಚಾರಿಸಿದಾಗ, “ಅಲ್ಲಿ ಗುಡಾರದಲ್ಲಿದ್ದಾಳೆ,” ಎಂದು ಉತ್ತರಕೊಟ್ಟನು.</verse>
				<verse number="10">ಆಗ ಸರ್ವೇಶ್ವರ ಸ್ವಾಮಿ, “ಬರುವ ವರ್ಷ ಇದೇ ಕಾಲದಲ್ಲಿ ನಾನು ತಪ್ಪದೆ ಮರಳಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಹೆಂಡತಿ ಸಾರಳಿಗೆ ಮಗನಿರುತ್ತಾನೆ,” ಎಂದರು. ಈ ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿದ್ದಿತು.</verse>
				<verse number="11">ಅಬ್ರಹಾಮನು ಮತ್ತು ಸಾರಳು ಬಹು ವೃದ್ಧರಾಗಿದ್ದರು; ಸಾರಳಿಗೆ ಮುಟ್ಟುನಿಂತುಹೋಗಿತ್ತು.</verse>
				<verse number="12">ಎಂತಲೇ ಆಕೆ, “ನನ್ನಂಥ ಮುದುಕಿಗೆ ಸಂಭೋಗ ಸಾಧ್ಯವೆ? ನನ್ನ ಯಜಮಾನರೂ ಮುದುಕರಲ್ಲವೆ?” ಎಂದುಕೊಂಡು ನಕ್ಕಳು.</verse>
				<verse number="13">ಅಬ್ರಹಾಮನಿಗೆ, ಸರ್ವೇಶ್ವರ “ 'ಸಾರಳು ತಾನು ಮುದುಕಿಯಾದ ಕಾರಣ ಹೆರಲು ಸಾಧ್ಯವೆ' ಎಂದು ನಕ್ಕಿದ್ದು ಏಕೆ?</verse>
				<verse number="14">ಸರ್ವೇಶ್ವರನಿಗೆ ಅಸಾಧ್ಯವಾದುದು ಯಾವುದು? ನಾನು ಹೇಳಿದಂತೆಯೇ ಬರುವ ವರ್ಷದ ಇದೇ ಕಾಲದಲ್ಲಿ ನಾನು ನಿನ್ನ ಬಳಿಗೆ ಬಂದಾಗ ಸಾರಳಿಗೆ ಮಗನಿರುತ್ತಾನೆ” ಎಂದು ಹೇಳಿದರು.</verse>
				<verse number="15">ಆಗ ಸಾರಳು ಭಯದಿಂದ, “ನಾನು ನಗಲಿಲ್ಲ” ಎಂದು ನಿರಾಕರಿಸಿದಳು. ಸರ್ವೇಶ್ವರ, \ಹಾಗನ್ನಬೇಡಮ್ಮಾ, 'ನೀನು ನಕ್ಕದ್ದು ನಿಜ' ” ಎಂದರು.</verse>
				<verse number="16">ಆ ಮನುಷ್ಯರು ಅಲ್ಲಿಂದ ಹೊರಟು ಸೊದೋಮ್ ಕಾಣಿಸುತ್ತಿದ್ದ ಒಂದು ಸ್ಥಳಕ್ಕೆ ಬಂದರು. ಅವರನ್ನು ಸಾಗಕಳುಹಿಸುತ್ತಾ ಅಬ್ರಹಾಮನೂ ಅವರ ಜೊತೆಯಲ್ಲೇ ಅಲ್ಲಿಗೆ ಬಂದನು.</verse>
				<verse number="17">ಆಗ ಸರ್ವೇಶ್ವರ ತಮ್ಮೊಳಗೆ ಇಂತೆಂದುಕೊಂಡರು: “ನಾನು ಮಾಡಬೇಕು ಎಂದಿರುವ ಕಾರ್ಯವನ್ನು ಅಬ್ರಹಾಮನಿಂದ ಮರೆಮಾಡುವುದು ಸರಿಯಲ್ಲ,</verse>
				<verse number="18">ಅವನಿಂದ ಮಹಾ ಬಲಿಷ್ಠವಾದ ರಾಷ್ಟ್ರವೊಂದು ಹುಟ್ಟಬೇಕಾಗಿದೆ. ಅವನ ಮುಖಾಂತರ ಜಗದ ಎಲ್ಲ ರಾಷ್ಟ್ರಗಳಿಗೆ ನನ್ನ ಆಶೀರ್ವಾದ ದೊರಕಬೇಕಾಗಿದೆ.</verse>
				<verse number="19">ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ\.</verse>
				<verse number="20">ಇದಲ್ಲದೆ ಸರ್ವೇಶ್ವರ, “ಸೊದೋಮ್ ಗೊಮೋರಗಳ ವಿರುದ್ಧ ಎಷ್ಟೋ ಘನತರವಾದ ದೂರುಗಳು ನನಗೆ ಬಂದಿವೆ; ಆ ಊರಿನವರ ಮೇಲೆ ಹೊರಿಸಲಾಗಿರುವ ಪಾಪಕೃತ್ಯವೂ ಘೋರವಾದುದು.</verse>
				<verse number="21">ನನಗೆ ಮುಟ್ಟಿರುವ ದೂರಂತೆ ಅವರು ಮಾಡಿದರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ,” ಎಂದುಕೊಂಡರು.</verse>
				<verse number="22">ಆಗ ಆ ಇಬ್ಬರು ಮನುಷ್ಯರು ಅಲ್ಲಿಂದ ಸೊದೋಮಿನ ಕಡೆಗೆ ಹೋದರು. ಆದರೆ ಅಬ್ರಹಾಮನು ಸರ್ವೇಶ್ವರ ಸ್ವಾಮಿಯ ಸಂಗಡವೇ ಉಳಿದುಕೊಂಡನು.</verse>
				<verse number="23">ಅವನು ಅವರ ಹತ್ತಿರಕ್ಕೆ ಬಂದು, “ನೀವು ದುರ್ಜನರ ಸಂಗಡ ಸಜ್ಜನರನ್ನೂ ನಾಶಮಾಡುವಿರೋ?</verse>
				<verse number="24">ಒಂದು ವೇಳೆ ಆ ಊರೊಳಗೆ ಐವತ್ತು ಮಂದಿ ಸಜ್ಜನರಿದ್ದಾರು. ಅದರಲ್ಲಿ ಐವತ್ತು ಮಂದಿ ಸಜ್ಜನರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿರೋ?</verse>
				<verse number="25">ಹೀಗೆ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ಸಜ್ಜನರನ್ನೂ ಸಂಹರಿಸುವುದು ನಿಮ್ಮಿಂದ ಎಂದಿಗೂ ಆಗಬಾರದು. ಇಡೀ ಜಗತ್ತಿನ ನ್ಯಾಯಾಧಿಪತಿ ಸರಿಯಾಗಿ ನ್ಯಾಯತೀರಿಸಬೇಕಲ್ಲವೇ?\ ಎಂದನು.</verse>
				<verse number="26">ಅದಕ್ಕೆ ಸರ್ವೇಶ್ವರ, “ಸೊದೋಮಿನಲ್ಲಿ ಐವತ್ತು ಮಂದಿ ಸಜ್ಜನರು ನನಗೆ ಸಿಕ್ಕಿದರೆ ಅವರ ನಿಮಿತ್ತ ಊರನ್ನೆಲ್ಲಾ ಉಳಿಸುತ್ತೇನೆ,” ಎಂದರು.</verse>
				<verse number="27">ಆಗ ಅಬ್ರಹಾಮನು, “ನಾನಂತೂ ಮಣ್ಣುಬೂದಿ, ಆದರೂ ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ.</verse>
				<verse number="28">ಒಂದು ವೇಳೆ ಐವತ್ತು ಮಂದಿ ಸಜ್ಜನರಿಗೆ ಐದು ಮಂದಿ ಕಡಿಮೆಯಾಗಿದ್ದಾರು. ಐದು ಮಂದಿ ಕಡಿಮೆಯಾದುದಕ್ಕೆ ಪಟ್ಟಣವನ್ನೆಲ್ಲ ನಾಶಮಾಡುವಿರೋ?” ಎಂದು ಕೇಳಲು ಸರ್ವೇಶ್ವರ, “ಅಲ್ಲಿ ನಲವತ್ತೈದು ಮಂದಿ ಸಿಕ್ಕಿದರೆ ಅದನ್ನು ನಾಶಮಾಡುವುದಿಲ್ಲ” ಎಂದರು.</verse>
				<verse number="29">ಅಬ್ರಹಾಮನು ಇನ್ನೂ ಮುಂದುವರೆದು, “ಒಂದು ವೇಳೆ ಅಲ್ಲಿ ನಲವತ್ತು ಮಂದಿ ಸಿಕ್ಕಾರು\ಎನ್ನಲು \ನಲವತ್ತು ಮಂದಿ ಸಿಕ್ಕಿದರೆ ಆ ಪಟ್ಟಣವನ್ನು ನಾಶಮಾಡುವುದಿಲ್ಲ,” ಎಂದರು.</verse>
				<verse number="30">ಅಬ್ರಹಾಮನು, “ಸ್ವಾಮೀ, ಕೋಪಮಾಡಬೇಡಿ; ಇನ್ನೂ ಮಾತಾಡುತ್ತೇನೆ. ಒಂದು ವೇಳೆ ಮೂವತ್ತು ಮಂದಿ ಅಲ್ಲಿ ಸಿಕ್ಕಾರು” ಎನ್ನಲು ಸರ್ವೇಶ್ವರ, “ಅಲ್ಲಿ ಮೂವತ್ತು ಮಂದಿ ಸಿಕ್ಕಿದರೂ ಅದನ್ನು ನಾಶಮಾಡುವುದಿಲ್ಲ,” ಎಂದರು.</verse>
				<verse number="31">ಅವನು, “ಸ್ವಾಮಿಯ ಸಂಗಡ ಮಾತನಾಡಲು ನಾನು ಇನ್ನೂ ಧೈರ್ಯಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತೇ ಮಂದಿ ಅಲ್ಲಿ ಸಿಕ್ಕಾರು,” ಎನ್ನಲು, ಸರ್ವೇಶ್ವರ, “ಇಪ್ಪತ್ತು ಮಂದಿಯಿದ್ದರೆ ಅವರ ನಿಮಿತ್ತ ಅದನ್ನು ಉಳಿಸುತ್ತೇನೆ, ನಾಶಮಾಡುವುದಿಲ್ಲ,” ಎಂದರು.</verse>
				<verse number="32">ಅಬ್ರಹಾಮನು, “ಸ್ವಾಮೀ, ಸಿಟ್ಟುಗೊಳ್ಳಬೇಡಿ; ಇನ್ನು ಒಂದೇ ಒಂದು ಸಾರಿ ಮಾತಾಡುತ್ತೇನೆ; ಒಂದು ವೇಳೆ ಹತ್ತೇ ಮಂದಿ ಸಿಕ್ಕಾರು” ಎನ್ನಲು, ಸರ್ವೇಶ್ವರ, “ಹತ್ತು ಮಂದಿಯ ನಿಮಿತ್ತವೂ ಅದನ್ನು ಉಳಿಸುತ್ತೇನೆ, ನಾಶಮಾಡುವುದಿಲ್ಲ,” ಎಂದರು.</verse>
				<verse number="33">ಅನಂತರ ಅಬ್ರಹಾಮನೊಡನೆ ಮಾತಾಡುವುದನ್ನು ಮುಗಿಸಿ ಸರ್ವೇಶ್ವರ ಸ್ವಾಮಿ ಹೊರಟುಹೋದರು. ಅಬ್ರಹಾಮನು ತನ್ನ ಮನೆಗೆ ಹಿಂತಿರುಗಿದನು.</verse>
			</chapter>
			<chapter number="19">
				<verse number="1">ಆ ದೂತರಿಬ್ಬರು ಸೊದೋಮಿಗೆ ಬಂದಾಗ ಸಾಯಂಕಾಲವಾಗಿತ್ತು. ಲೋಟನು ಆ ಊರಬಾಗಿಲಲ್ಲೇ ಕುಳಿತುಕೊಂಡಿದ್ದನು. ದೂತರನ್ನು ಕಂಡದ್ದೇ ಅವನು ಎದ್ದುಬಂದು, ಬಾಗಿ ನಮಸ್ಕರಿಸಿ,</verse>
				<verse number="2">ಸ್ವಾಮಿಗಳೇ, ನಿಮ್ಮ ದಾಸನ ಮನೆಗೆ ಬಂದು ರಾತ್ರಿ ತಂಗಿರಿ. ಕಾಲುಗಳನ್ನು ತೊಳೆದುಕೊಳ್ಳಿ. ಬೆಳಿಗ್ಗೆ ಎದ್ದು ನಿಮ್ಮ ಪ್ರಯಾಣವನ್ನು ಮುಂದುವರಿಸಬಹುದು,” ಎಂದನು.</verse>
				<verse number="3">ಅವರು, “ಇಲ್ಲ, ನಾವು ಬೀದಿಯಲ್ಲೇ ರಾತ್ರಿಯನ್ನು ಕಳೆಯುತ್ತೇವೆ,” ಎಂದು ಉತ್ತರಿಸಿದರು. ಅವನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅವನ ಮನೆಯಲ್ಲೇ ತಂಗಲು ಒಪ್ಪಿಕೊಂಡರು. ಅವರು ಮನೆಗೆ ಬಂದಾಗ ಲೋಟನು ಹುಳಿಯಿಲ್ಲದ ರೊಟ್ಟಿಗಳನ್ನು ಸುಡಿಸಿ ಔತಣವನ್ನು ಸಿದ್ಧಗೊಳಿಸಿದನು; ಅವರು ಊಟಮಾಡಿದರು.</verse>
				<verse number="4">ಆದರೆ ಅವರು ಮಲಗುವುದಕ್ಕೆ ಮುಂಚೆ ಆ ಸೊದೋಮ್ ಪಟ್ಟಣದ ಗಂಡಸರು, ಹುಡುಗರು-ಮುದುಕರು ಎನ್ನದೆ, ಎಲ್ಲರೂ ಬಂದು ಆ ಮನೆಯನ್ನು ಮುತ್ತಿದರು.</verse>
				<verse number="5">ಅಲ್ಲದೆ ಲೋಟನಿಗೆ, \ಈ ರಾತ್ರಿ ತಂಗಲು ನಿನ್ನ ಬಳಿಗೆ ಬಂದ ಆ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ಸಂಭೋಗಿಸಬೇಕು,” ಎಂದು ಕೂಗಿ ಹೇಳಿದರು.</verse>
				<verse number="6">ಲೋಟನು, ತನ್ನ ಹಿಂದೆ ಬಾಗಿಲು ಹಾಕಿಕೊಂಡು, ಹೊರಕ್ಕೆ ಬಂದು,</verse>
				<verse number="7">\ಅಣ್ಣ ತಮ್ಮಂದಿರಾ, ನಿಮ್ಮನ್ನು ವಿನಂತಿಸಿ ಕೇಳಿಕೊಳ್ಳುತ್ತೇನೆ: ಈ ಪಾತಕ ಮಾತ್ರ ಮಾಡಬೇಡಿ;</verse>
				<verse number="8">ಕೇಳಿ, ಕನ್ಯೆಯರಾದ ಇಬ್ಬರು ಹೆಣ್ಣುಮಕ್ಕಳು ನನಗಿದ್ದಾರೆ; ಅವರನ್ನು ಬೇಕಾದರೆ ಹೊರಗೆ ಕರೆಯಿಸುತ್ತೇನೆ; ನಿಮಗೆ ಇಷ್ಟಬಂದಂತೆ ಮಾಡಬಹುದು. ಆದರೆ ಆ ಮನುಷ್ಯರು ನನ್ನ ಆಶ್ರಯಕ್ಕಾಗಿ ಬಂದವರು; ಅವರಿಗೆ ಏನೂ ಮಾಡಬೇಡಿ,” ಎಂದನು.</verse>
				<verse number="9">ಅವರಾದರೋ, “ಬಿಡು ದಾರಿ, ಪ್ರವಾಸಿಯಾಗಿ ಬಂದ ಇವನು ನಮಗೆ ನ್ಯಾಯಹೇಳುವವನಾಗಿಬಿಟ್ಟ! ದಾರಿ ಬಿಡದಿದ್ದರೆ ಆ ಮನುಷ್ಯರಿಗಿಂತ ನಿನಗೇ ಹೆಚ್ಚು ಕೇಡಾದೀತು,” ಎಂದು ಹೇಳಿ ಲೋಟನ ಮೇಲೆ ಬಿದ್ದು ತುಳಿದು ಬಾಗಿಲನ್ನು ಒಡೆದುಹಾಕುವುದರಲ್ಲಿದ್ದರು.</verse>
				<verse number="10">ಅಷ್ಟರಲ್ಲಿ ಒಳಗಿದ್ದ ಆ ಮನುಷ್ಯರು ಕೈಚಾಚಿ ಲೋಟನನ್ನು ತಮ್ಮತ್ತ ಎಳೆದು ಮನೆಯೊಳಗೆ ಹಾಕಿಕೊಂಡು, ಬಾಗಿಲನ್ನು ಮುಚ್ಚಿದರು;</verse>
				<verse number="11">ದೊಡ್ಡವರು ಚಿಕ್ಕವರು ಎನ್ನದೆ, ಹೊರಗಿದ್ದ ಆ ಜನರೆಲ್ಲರ ಕಣ್ಣು ಕುರುಡಾಗುವಂತೆ ಮಾಡಿದರು; ಬಾಗಿಲು ಯಾವುದೆಂದು ತಿಳಿಯದೆ ಅವರು ತಡಕಾಡುವಂತೆ ಮಾಡಿಬಿಟ್ಟರು.</verse>
				<verse number="12">ಬಳಿಕ ಆ ಮನುಷ್ಯರಿಬ್ಬರು ಲೋಟನಿಗೆ, “ನಿನಗೆ ಇಲ್ಲಿ ಯಾರು ಯಾರು ಇದ್ದಾರೆಯೋ, ಗಂಡುಹೆಣ್ಣು ಮಕ್ಕಳು, ಅಳಿಯಂದಿರು ಹಾಗೂ ಪಟ್ಟಣದಲ್ಲಿ ನಿನಗಿರುವ ಬೇರೆ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ.</verse>
				<verse number="13">ನಾವು ಈ ಸ್ಥಳವನ್ನು ನಾಶಮಾಡುವುದಕ್ಕೆ ಬಂದವರು. ಇಲ್ಲಿಯವರ ವಿಷಯವಾಗಿ ಬಂದ ಆಪಾದನೆ ದೊಡ್ಡದಾದುದರಿಂದ ಇವರನ್ನು ನಾಶಮಾಡುವುದಕ್ಕಾಗಿ ಸರ್ವೇಶ್ವರ ನಮ್ಮನ್ನು ಕಳಿಸಿದ್ದಾರೆ,” ಎಂದು ತಿಳಿಸಿದರು.</verse>
				<verse number="14">ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳಿಗೆ ಗೊತ್ತುಮಾಡಿದ್ದ ಅಳಿಯಂದಿರಿಗೆ ಸಂಗತಿಯನ್ನು ಹೇಳಿ, “ನೀವೆದ್ದು ಈ ಸ್ಥಳವನ್ನು ಬಿಟ್ಟ ಹೊರಡಿರಿ; ಈ ಊರನ್ನು ಸರ್ವೇಶ್ವರ ಸ್ವಾಮಿ ನಾಶ ಮಾಡಲಿದ್ದಾರೆ” ಎಂದು ಹೇಳಿದನು. ಆ ಅಳಿಯಂದಿರಿಗೆ ಇದೊಂದು ಪರಿಹಾಸ್ಯವಾಗಿ ಕಾಣಿಸಿತು.</verse>
				<verse number="15">ಹೊತ್ತು ಮೂಡುವುದಕ್ಕೆ ಮುಂಚೆ ದೂತರು ಲೋಟನಿಗೆ, “ಏಳು, ನಿನ್ನ ಹೆಂಡತಿ ಮತ್ತು ಹೆಣ್ಣುಮಕ್ಕಳಿಬ್ಬರನ್ನು ಕರೆದುಕೊಂಡು ಬೇಗನೆ ಹೊರಡು; ಇಲ್ಲದಿದ್ದರೆ ಊರಿಗೆ ಬರಲಿರುವ ದಂಡನೆಯಲ್ಲಿ ನೀನೂ ಸಿಕ್ಕಿಕೊಂಡು ನಾಶವಾಗಬೇಕಾದೀತು,” ಎಂದು ಹೇಳಿ ತ್ವರೆಪಡಿಸಿದರು.</verse>
				<verse number="16">ಅವನು ಇನ್ನೂ ತಡಮಾಡುತ್ತಿರುವುದನ್ನು ಕಂಡು, ಆ ಮನುಷ್ಯರು ಅವನನ್ನು ಹಾಗು ಅವನ ಹೆಂಡತಿ ಮಕ್ಕಳನ್ನು ಕೈಹಿಡಿದು ಹೊರಗೆ ತಂದು ಊರಾಚೆಗೆ ಬಿಟ್ಟರು. ಸರ್ವೇಶ್ವರ ಸ್ವಾಮಿಗೆ ಅವನ ಮೇಲೆ ಅಷ್ಟು ಕನಿಕರವಿತ್ತು.</verse>
				<verse number="17">ಊರ ಹೊರಗೆ ಬಿಟ್ಟಾದ ಮೇಲೆ ಆ ಇಬ್ಬರಲ್ಲಿ ಒಬ್ಬನು, “ಪ್ರಾಣ ಉಳಿಸಿಕೊಳ್ಳಬೇಕಾದರೆ ಓಡಬೇಕು, ಹಿಂದಕ್ಕೆ ನೋಡಬಾರದು; ಬಯಲುಸೀಮೆಯಲ್ಲೂ ನಿಲ್ಲದೆ ಗುಡ್ಡಗಾಡಿಗೆ ಓಡಬೇಕು, ಇಲ್ಲವಾದರೆ ನಾಶವಾದೀತು!” ಎಂದು ಎಚ್ಚರಿಸಿದನು.</verse>
				<verse number="18">ಅದಕ್ಕೆ ಲೋಟನು, “ಸ್ವಾಮೀ ಅದು ನನ್ನಿಂದಾಗದು;</verse>
				<verse number="19">ನಿಮ್ಮ ದಾಸನ ಮೇಲೆ ಮರುಕವಿಟ್ಟು, ಪ್ರಾಣ ಉಳಿಸಿದ್ದೇನೋ ಮಹಾ ಉಪಕಾರ ಆಯಿತು; ಆದರೆ ಗುಡ್ಡಗಾಡಿಗೆ ಓಡಿಹೋಗಲು ನನ್ನಿಂದಾಗದು, ಅಲ್ಲಿಗೆ ಸೇರುವುದಕ್ಕೆ ಮುಂಚೆಯೇ ಈ ವಿಪತ್ತಿಗೆ ಸಿಕ್ಕಿ ಸತ್ತೇನು.</verse>
				<verse number="20">ಆದುದರಿಂದ ಅಗೋ, ಅಲ್ಲಿ ಊರೊಂದು ಕಾಣಿಸುತ್ತಿದೆ; ಅದು ಅಷ್ಟೇನು ದೂರವಲ್ಲ, ಚಿಕ್ಕ ಊರು, ಹೌದಲ್ಲವೆ? ಅಲ್ಲಿಗಾದರೂ ಹೋಗಲು ಅಪ್ಪಣೆಯಾದರೆ ಪ್ರಾಣ ಉಳಿಯುತ್ತದೆ,” ಎಂದನು.</verse>
				<verse number="21">ಅದಕ್ಕಾತನು, “ಸರಿ, ಹಾಗೆಯೇ ಆಗಲಿ, ಈ ನಿನ್ನ ಕೋರಿಕೆಯನ್ನೂ ನೆರವೇರಿಸುತ್ತೇನೆ, ನೀನು ಹೇಳಿದ ಆ ಊರನ್ನು ಹಾಳುಮಾಡುವುದಿಲ್ಲ.</verse>
				<verse number="22">ಬೇಗನೆ ಅಲ್ಲಿಗೆ ಹೋಗಿ ಸುರಕ್ಷಿತವಾಗಿರು, ನೀನು ಅಲ್ಲಿಗೆ ಮುಟ್ಟುವ ತನಕ ನಾನು ಏನನ್ನೂ ಮಾಡಲಿಕ್ಕಾಗುವುದಿಲ್ಲ,” ಎಂದನು. ಲೋಟನು ಆ ಊರನ್ನು ಚಿಕ್ಕದು ಎಂದು ಕರೆದುದಕ್ಕಾಗಿ ಅದಕ್ಕೆ “ಚೋಗರ್” ಎಂದು ಹೆಸರಾಯಿತು.</verse>
				<verse number="23">ಲೋಟನು ಚೋಗರನ್ನು ಮುಟ್ಟುವಷ್ಟರಲ್ಲಿ ಸೂರ್ಯೋದಯವಾಗಿತ್ತು.</verse>
				<verse number="24">ಆಗ ಸರ್ವೇಶ್ವರ ಸ್ವಾಮಿ ಸೊದೋಮ್ - ಗೊಮೋರಗಳ ಮೇಲೆ ಅಗ್ನಿ ಉರಿಯುತ್ತಿರುವ ಗಂಧಕಮಳೆ ಸುರಿಸಿದರು.</verse>
				<verse number="25">ಆ ಪಟ್ಟಣಗಳನ್ನು, ಇಡೀ ಆ ಬಯಲುಸೀಮೆಯನ್ನೂ ಅವುಗಳ ನಿವಾಸಿಗಳನ್ನೂ ಹೊಲಗಳ ಬೆಳೆಯೆಲ್ಲವನ್ನೂ ಹಾಳುಮಾಡಿದರು.</verse>
				<verse number="26">ಲೋಟನ ಹೆಂಡತಿಯೋ, ಅವನ ಹಿಂದೆ ಬರುತ್ತಿದ್ದಾಗ ಹಿಂದಿರುಗಿ ನೋಡಿದಳು; ಕೂಡಲೇ ಉಪ್ಪಿನ ಕಂಬವಾಗಿ ಮಾರ್ಪಟ್ಟಳು.</verse>
				<verse number="27">ಇತ್ತ ಅಬ್ರಹಾಮನು ಬೆಳಿಗ್ಗೆ ಎದ್ದು ತಾನು ಸರ್ವೇಶ್ವರ ಸ್ವಾಮಿ ಸನ್ನಿಧಿಯಲ್ಲಿ ನಿಂತಿದ್ದ ಸ್ಥಳಕ್ಕೆ ಮರಳಿ ಬಂದನು.</verse>
				<verse number="28">ಸೊದೋಮ್ - ಗೊಮೋರ ಹಾಗೂ ಆ ಬಯಲುಸೀಮೆಯತ್ತ ಅವನು ಕಣ್ಣುಹಾಯಿಸಿದಾಗ, ಇಗೋ, ಆ ಪ್ರದೇಶದಿಂದ ಹೊಗೆ, ದೊಡ್ಡ ಆವಿಗೆಯ ಹೊಗೆಯಂತೆ ಭುಗಿಲೇರುತ್ತಿತ್ತು.</verse>
				<verse number="29">ದೇವರು ಆ ಬಯಲುಸೀಮೆಯ ಪಟ್ಟಣಗಳನ್ನು ನಾಶಮಾಡಿದಾಗ ಲೋಟನು ವಾಸವಾಗಿದ್ದ ಊರುಗಳನ್ನೇನೋ ಹಾಳುಮಾಡಿದರು, ಆದರೆ ಅಬ್ರಹಾಮನನ್ನು ನೆನಪಿಗೆ ತಂದುಕೊಂಡು ಲೋಟನನ್ನು ತಪ್ಪಿಸಿ ಕಾಪಾಡಿದರು.</verse>
				<verse number="30">ಲೋಟನು ಚೋಗರಿನಲ್ಲಿ ಮನೆ ಮಾಡುವುದಕ್ಕೆ ಅಂಜಿದನು. ಈ ಕಾರಣ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಕರೆದುಕೊಂಡು ಗುಡ್ಡಗಾಡನ್ನು ಹತ್ತಿ ಅಲ್ಲಿದ್ದ ಒಂದು ಗವಿಯಲ್ಲಿ ವಾಸಮಾಡಿದನು.</verse>
				<verse number="31">ಇಂತಿರಲು, ಅವನ ಹಿರಿಯ ಮಗಳು ತನ್ನ ತಂಗಿಗೆ ಹೀಗೆಂದಳು. “ನಮ್ಮ ತಂದೆ ಮುದುಕ; ಲೋಕ ಪದ್ಧತಿಯ ಪ್ರಕಾರ ನಮ್ಮನ್ನು ಮದುವೆ ಮಾಡಿಕೊಳ್ಳುವ ಗಂಡುಗಳು ಇಲ್ಲೆಲ್ಲಿಯೂ ಇಲ್ಲ.</verse>
				<verse number="32">ಎಂದೇ ಬಾ ತಂದೆಗೆ ದ್ರಾಕ್ಷಾರಸವನ್ನು ಕುಡಿಸೋಣ; ಅವನ ಸಂಗಡ ಮಲಗಿಕೊಂಡು ತಂದೆಯಿಂದಲಾದರೂ ಸಂತಾನ ಪಡೆದುಕೊಳ್ಳೋಣ,“ ಎಂದಳು.</verse>
				<verse number="33">ಆ ರಾತ್ರಿ ಅವರು ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದರು. ಹಿರಿಯ ಮಗಳು ಅವನ ಸಂಗಡ ಮಲಗಿಕೊಂಡಳು. ಅವಳು ಯಾವಾಗ ತನ್ನ ಸಂಗಡ ಮಲಗಿಕೊಂಡಳೋ, ಯಾವಾಗ ಎದ್ದು ಹೋದಳೋ ಏನೊಂದೂ ಅವನಿಗೆ ತಿಳಿಯಲಿಲ್ಲ.</verse>
				<verse number="34">ಮಾರನೆಯ ದಿನ ಹಿರಿಯಳು ಕಿರಿಯಳಿಗೆ, “ನಿನ್ನೆ ರಾತ್ರಿ ನಾನು ಅಪ್ಪನ ಸಂಗಡ ಮಲಗಿದ್ದೆ. ಈ ರಾತ್ರಿ ಕೂಡ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆಮೇಲೆ ನೀನು ಅವನ ಸಂಗಡ ಮಲಗಿಕೊ; ಹೀಗಾದರೂ ನಮ್ಮ ತಂದೆಯ ಸಂತಾನ ಉಳಿಸೋಣ”, ಎಂದು ಹೇಳಿದಳು.</verse>
				<verse number="35">ಆ ರಾತ್ರಿಯೂ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿದ ಮೇಲೆ ಕಿರಿಯ ಮಗಳು ಅವನ ಸಂಗಡ ಮಲಗಿಕೊಂಡಳು. ಅವಳು ಯಾವಾಗ ತನ್ನ ಸಂಗಡ ಮಲಗಿದಳೋ, ಯಾವಾಗ ಎದ್ದು ಹೋದಳೋ ಏನೊಂದೂ ಅವನಿಗೆ ತಿಳಿಯಲಿಲ್ಲ.</verse>
				<verse number="36">ಹೀಗೆ ಲೋಟನ ಇಬ್ಬರು ಹೆಣ್ಣುಮಕ್ಕಳು ಗರ್ಭಿಣಿಯರಾದರು.</verse>
				<verse number="37">ಹಿರಿಯಳು ಗಂಡುಮಗುವನ್ನು ಹೆತ್ತು ಅದಕ್ಕೆ “ಮೋವಾಬ್” ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಮೋವಾಬ್ಯರಿಗೆ ಅವನೇ ಮೂಲಪುರುಷ.</verse>
				<verse number="38">ಕಿರಿಯಳೂ ಗಂಡುಮಗುವನ್ನು ಹೆತ್ತು ಅದಕ್ಕೆ ‘ಬಿನಮ್ಮಿ’ ಎಂದು ಹೆಸರಿಟ್ಟಳು. ಇಂದಿನವರೆಗೂ ಇರುವ ಅಮ್ಮೋನಿಯರಿಗೆ ಇವನೇ ಮೂಲಪುರುಷ.</verse>
			</chapter>
			<chapter number="20">
				<verse number="1">ಅಬ್ರಹಾಮನು ಅಲ್ಲಿಂದ ಕಾನಾನ್ ನಾಡಿನ ದಕ್ಷಿಣ ಪ್ರಾಂತಕ್ಕೆ ಪ್ರಯಾಣ ಮಾಡುತ್ತಾ ಕಾದೇಶಿಗೂ ಶೂರಿಗೂ ನಡುವೆ ವಾಸಮಾಡಿದನು. ಕೆಲವು ಕಾಲ ಗೆರಾರಿನಲ್ಲೂ ಇದ್ದನು.</verse>
				<verse number="2">ಅಲ್ಲಿದ್ದಾಗ ಅಬ್ರಹಾಮನು ತನ್ನ ಹೆಂಡತಿ ಸಾರಳು ತನಗೆ ತಂಗಿಯಾಗಬೇಕೆಂದು ಹೇಳಿಕೊಂಡನು. ಈ ಕಾರಣ ಗೆರಾರಿನ ಅರಸನಾದ ಅಬೀಮೆಲೆಕನು ಆಕೆಯನ್ನು ಕರೆಸಿ ತನ್ನ ಮನೆಯಲ್ಲಿ ಸೇರಿಸಿಕೊಂಡನು.</verse>
				<verse number="3">ಆದರೆ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ನೀನು ಆ ಮಹಿಳೆಯನ್ನು ಸೇರಿಸಿಕೊಂಡ ಕಾರಣ ಸಾಯತಕ್ಕವನು, ಆಕೆಗೆ ಗಂಡನಿದ್ದಾನೆ,” ಎಂದರು.</verse>
				<verse number="4">ಅಬೀಮೆಲೆಕನು ಆಕೆಯನ್ನು ಅಲ್ಲಿಯವರೆಗೂ ಕೂಡಿರಲಿಲ್ಲ. ಎಂದೇ ಅವನು, “ಸ್ವಾಮೀ ನಿರಪರಾಧಿಯಾದ ಪ್ರಜೆಯನ್ನು ನೀವು ನಾಶಮಾಡುವಿರೋ?</verse>
				<verse number="5">ಆ ಮನುಷ್ಯನೇ ಈಕೆ ನನಗೆ ತಂಗಿಯಾಗಬೇಕೆಂದು ಹೇಳಿದ; ಈಕೆಯೂ ಆತನು ನನಗೆ ಅಣ್ಣನಾಗಬೇಕೆಂದು ಹೇಳಿದಳು. ಶುದ್ಧಮನಸ್ಸಿನಿಂದ ಹಾಗೂ ಶುದ್ಧಹಸ್ತದಿಂದ ಈ ಕಾರ್ಯಮಾಡಿದೆ,” ಎಂದನು.</verse>
				<verse number="6">ಅದಕ್ಕೆ ದೇವರು ಪ್ರತ್ಯುತ್ತರವಾಗಿ, “ನೀನು ಶುದ್ಧಮನಸ್ಸಿನಿಂದ ಈ ಕಾರ್ಯಮಾಡಿದೆಯೆಂದು ನಾನು ಬಲ್ಲೆ; ಆದಕಾರಣವೇ ನನಗೆ ವಿರುದ್ಧವಾಗಿ ನೀನು ಪಾಪಮಾಡದಂತೆ ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.</verse>
				<verse number="7">ಈಗ ಆ ಮನುಷ್ಯನ ಹೆಂಡತಿಯನ್ನು ಮರಳಿ ಅವನಿಗೆ ಒಪ್ಪಿಸಿಬಿಡು. ಅವನೊಬ್ಬ ಪ್ರವಾದಿ. ನಿನ್ನ ಪರವಾಗಿ ನನ್ನನ್ನು ಪ್ರಾರ್ಥಿಸುವನು, ನೀನು ಬದುಕುವೆ. ಆಕೆಯನ್ನು ಒಪ್ಪಿಸಲು ನಿರಾಕರಿಸಿದೆಯಾದರೆ ನೀನೂ ನಿನ್ನವರೆಲ್ಲರೂ ಸತ್ತೇ ಸಾಯುವಿರೆಂದು ತಿಳಿದುಕೊ,” ಎಂದು ಕನಸಿನಲ್ಲಿ ಹೇಳಿದರು.</verse>
				<verse number="8">ಅಬೀಮೆಲೆಕನು ಬೆಳಿಗ್ಗೆ ಬೇಗನೆ ಎದ್ದು ತನ್ನ ಪರಿವಾರವನ್ನೆಲ್ಲಾ ಕೂಡಿಸಿದನು. ನಡೆದ ಸಂಗತಿಗಳನ್ನೆಲ್ಲ ತಿಳಿಸಿದಾಗ ಅವರಿಗೆ ಬಹಳ ಭಯವುಂಟಾಯಿತು.</verse>
				<verse number="9">ಅನಂತರ ಅವನು ಅಬ್ರಹಾಮನನ್ನು ಕರೆಸಿ, “ನೀನು ನನಗೆ ಮಾಡಿದ್ದೇನು? ಯಾವ ತಪ್ಪಿಗಾಗಿ ನೀನು ನನ್ನನ್ನೂ ನನ್ನ ರಾಜ್ಯವನ್ನೂ ಈ ಮಹಾ ಪಾತಕಕ್ಕೆ ಒಳಪಡಿಸಿದೆ? ಮಾಡಬಾರದ ಕಾರ್ಯವನ್ನು ನೀನು ಮಾಡಿದೆ,” ಎಂದು ಹೇಳಿದನು.</verse>
				<verse number="10">ಅಲ್ಲದೆ, “ನೀನು ಯಾವ ಉದ್ದೇಶದಿಂದ ಹೀಗೆ ಮಾಡಿದೆ?” ಎಂದು ವಿಚಾರಿಸಿದನು.</verse>
				<verse number="11">ಅದಕ್ಕೆ ಅಬ್ರಹಾಮನು, “ಇಲ್ಲಿಯ ಜನರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದೂ ನನ್ನ ಹೆಂಡತಿಯ ನಿಮಿತ್ತ ನನ್ನನ್ನು ಕೊಂದಾರು ಎಂದೂ ಭಾವಿಸಿದೆ.</verse>
				<verse number="12">ಅದೂ ಅಲ್ಲದೆ ಈಕೆ ನಿಜವಾಗಿಯೂ ನನ್ನ ತಂಗಿ, ನನ್ನ ತಂದೆಯ ಮಗಳು, ಆದರೆ ನನ್ನ ತಾಯಿಯ ಮಗಳಲ್ಲ; ಎಂದೇ ನನಗೆ ಹೆಂಡತಿಯಾದಳು.</verse>
				<verse number="13">ನಾನು ದೇವರ ಸಂಕಲ್ಪಕ್ಕೆ ತಲೆಬಾಗಿ, ತಂದೆಯ ಮನೆಯನ್ನು ಬಿಟ್ಟು, ದೇಶಾಂತರ ಹೋಗಲು ಹೊರಟಾಗ ಈಕೆಗೆ, ‘ನಿನ್ನಿಂದ ನನಗೊಂದು ಉಪಕಾರವಾಗಬೇಕು; ಅದೇನೆಂದರೆ, ನಾವು ಹೋದಕಡೆಯೆಲ್ಲಾ ನಾನು ನಿನಗೆ ಅಣ್ಣನಾಗಬೇಕೆಂದು ಹೇಳು,’ ಎಂದು ತಿಳಿಸಿದೆ,” ಎಂದನು.</verse>
				<verse number="14">ಆಗ ಅಬೀಮೆಲೆಕನು ಅಬ್ರಹಾಮನಿಗೆ ದನಕುರಿಗಳನ್ನೂ ದಾಸದಾಸಿಯರನ್ನೂ ಕೊಟ್ಟು ಅವನ ಹೆಂಡತಿ ಸಾರಳನ್ನು ಅವನಿಗೆ ಒಪ್ಪಿಸಿದನು.</verse>
				<verse number="15">ಅದೂ ಅಲ್ಲದೆ, “ಇಗೋ, ನನ್ನ ನಾಡು ನಿನಗೆ ತೆರೆದಿದೆ; ಇಷ್ಟಬಂದ ಕಡೆ ಹೋಗಿ ವಾಸಮಾಡು,” ಎಂದನು.</verse>
				<verse number="16">ಸಾರಳಿಗೆ ಅವನು ಹೇಳಿದ್ದೇನೆಂದರೆ, “ನಿನ್ನ ಅಣ್ಣನಿಗೆ ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟಿದ್ದೇನೆ. ಇದರಿಂದ ನೀನು ನಿರ್ದೋಷಿಯೆಂದು ರುಜುವಾತಾಗಲಿ; ನೀನು ತಪ್ಪು ಮಾಡಿಲ್ಲವೆಂದು ಎಲ್ಲರಿಗೂ ಸ್ಪಷ್ಟವಾಗಲಿ.”</verse>
				<verse number="17">ತರುವಾಯ ಅಬ್ರಹಾಮನು ಅಬೀಮೆಲೆಕನಿಗೋಸ್ಕರ ದೇವರಲ್ಲಿ ಪ್ರಾರ್ಥನೆ ಮಾಡಿದನು. ದೇವರು ಅಬೀಮೆಲೆಕನನ್ನು, ಅವನ ಪತ್ನಿಯನ್ನು ಹಾಗೂ ದಾಸಿಯರನ್ನು ಗುಣಪಡಿಸಿದನು; ಅವರಿಗೆ ಮಕ್ಕಳಾದರು.</verse>
				<verse number="18">ಇದಕ್ಕೆ ಮುಂಚೆ ಅಬ್ರಹಾಮನ ಹೆಂಡತಿ ಸಾರಳ ನಿಮಿತ್ತ ಅಬೀಮೆಲೆಕನ ಮನೆಯಲ್ಲಿದ್ದ ಮಹಿಳೆಯರೆಲ್ಲರನ್ನು ಸರ್ವೇಶ್ವರ ಸ್ವಾಮಿ ಬಂಜೆಯರನ್ನಾಗಿಸಿದ್ದರು.</verse>
			</chapter>
			<chapter number="21">
				<verse number="1">ಸರ್ವೇಶ್ವರ ಸ್ವಾಮಿ ತಾವು ಹೇಳಿದ್ದಂತೆಯೇ ಸಾರಳಿಗೆ ನೆರವಾದರು. ಆಕೆಗೆ ಕೊಟ್ಟ ಮಾತನ್ನು ನೆರವೇರಿಸಿದರು.</verse>
				<verse number="2">ಆಕೆ ಗರ್ಭಿಣಿಯಾಗಿ ಅಬ್ರಹಾಮನಿಂದ ಒಬ್ಬ ಮಗನನ್ನು ಹೆತ್ತಳು, ಅದೂ ಅಬ್ರಹಾಮನು ಮುದುಕನಾಗಿದ್ದಾಗ, ದೇವರು ಮೊದಲೇ ನಿರ್ಧರಿಸಿದ್ದ ಕಾಲಕ್ಕೆ ಹೆತ್ತಳು.</verse>
				<verse number="3">ತನ್ನಿಂದ ಸಾರಳಲ್ಲಿ ಹುಟ್ಟಿದ ಆ ಮಗನಿಗೆ ಅಬ್ರಹಾಮನು ‘ಇಸಾಕ್’ ಎಂದು ಹೆಸರಿಟ್ಟನು.</verse>
				<verse number="4">ಎಂಟನೆಯ ದಿನದಲ್ಲಿ ದೇವರ ಅಪ್ಪಣೆಯ ಮೇರೆಗೆ ಅವನಿಗೆ ಸುನ್ನತಿ ಮಾಡಿದನು.</verse>
				<verse number="5">ಇಸಾಕನು ಹುಟ್ಟಿದಾಗ ಅಬ್ರಹಾಮನಿಗೆ ನೂರು ವರ್ಷವಾಗಿತ್ತು.</verse>
				<verse number="6">ಸಾರಳು ಇಂತೆಂದುಕೊಂಡಳು: “ತಂದಿಹನಿದೋ ಎನಗೊಂದು ‘ನಗು’ವನು ಆ ದೇವನು, ನಕ್ಕು ನಲಿವರೆನ್ನೊಡನೆ ಇದನು ಕೇಳುವವರೆಲ್ಲರು.”</verse>
				<verse number="7">ಅದೂ ಅಲ್ಲದೆ: “ಈಪರಿ ಪೇಳುತ್ತಿದ್ದರಾರು ಅಬ್ರಹಾಮನಿಗೆ? 'ಕುಡಿಸುವಳು ಸಾರಳೂ ಮೊಲೆ ಹಾಲನ್ನು ಮಕ್ಕಳಿಗೆ’? ಹೆತ್ತಿರುವೆ ನೋಡಿ ಮಗನನು ಮುಪ್ಪಿನಲು ಆತನಿಗೆ!”</verse>
				<verse number="8">ಕ್ರಮೇಣ ಆ ಮಗು ಬೆಳೆದು ಹಾಲು ಕುಡಿಯುವುದನ್ನು ಬಿಟ್ಟಿತು. ಇಸಾಕನು ಮೊಲೆಬಿಟ್ಟ ಆ ದಿನದಂದು ಅಬ್ರಹಾಮನು ದೊಡ್ಡ ಔತಣವನ್ನು ಏರ್ಪಡಿಸಿದ್ದನು.</verse>
				<verse number="9">ಈಜಿಪ್ಟಿನ ಹಾಗರಳಿಂದ ಅಬ್ರಹಾಮನಿಗೆ ಹುಟ್ಟಿದ ಹುಡುಗನು ತನ್ನ ಮಗ ಇಸಾಕನೊಡನೆ ನಕ್ಕುನಲಿದಾಡುವುದನ್ನು ಸಾರಳು ಕಂಡಳು.</verse>
				<verse number="10">ಆಕೆ ಅಬ್ರಹಾಮನಿಗೆ, “ಈ ದಾಸಿಯನ್ನೂ ಅವಳ ಮಗನನ್ನೂ ಮನೆಯಿಂದ ಕಳುಹಿಸಿಬಿಡಿ. ದಾಸಿಯ ಮಗನು ನನ್ನ ಮಗನೊಂದಿಗೆ ಹಕ್ಕುಬಾಧ್ಯಸ್ಥನಾಗಬಾರದು,” ಎಂದು ಹೇಳಿದಳು.</verse>
				<verse number="11">ಈ ಮಾತನ್ನು ಕೇಳಿ ಅಬ್ರಹಾಮನಿಗೆ ಬಹು ದುಃಖವಾಯಿತು. ಕಾರಣ - ಆ ದಾಸಿಯ ಮಗನೂ ಅವನ ಸ್ವಂತ ಮಗನಾಗಿದ್ದನು.</verse>
				<verse number="12">ಆದರೆ ದೇವರು, ಅಬ್ರಹಾಮನಿಗೆ, “ನಿನ್ನ ಮಗನ ಹಾಗೂ ದಾಸಿಯ ಬಗ್ಗೆ ನಿನಗೆ ಚಿಂತೆಬೇಡ; ಸಾರಳು ಹೇಳಿದಂತೆಯೇ ಮಾಡು, ಏಕೆಂದರೆ ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು.</verse>
				<verse number="13">ಈ ದಾಸಿಯ ಮಗನು ನಿನ್ನಿಂದ ಹುಟ್ಟಿದವನಾದ್ದರಿಂದ ಅವನಿಂದಲೂ ಒಂದು ರಾಷ್ಟ್ರ ಉತ್ಪತ್ತಿಯಾಗುವಂತೆ ಮಾಡುತ್ತೇನೆ,” ಎಂದು ಹೇಳಿದರು.</verse>
				<verse number="14">ಮಾರನೆಯ ದಿನ ಬೆಳಿಗ್ಗೆ ಅಬ್ರಹಾಮನು ಹಾಗರಳಿಗೆ ಬುತ್ತಿಯನ್ನೂ ನೀರಿನ ತಿತ್ತಿಯನ್ನೂ ಕೊಟ್ಟು, ಹೆಗಲ ಮೇಲೆ ಮಗುವನ್ನು ಕೂರಿಸಿ ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.</verse>
				<verse number="15">ತಿತ್ತಿಯಲ್ಲಿದ್ದ ನೀರು ಮುಗಿದುಹೋಯಿತು. ಮಗು ಸಾಯುವುದನ್ನು ನಾನು ನೋಡಲಾರೆ ಎಂದುಕೊಂಡು,</verse>
				<verse number="16">ಅವಳು ಆ ಮಗುವನ್ನು ಒಂದು ಗಿಡದ ನೆರಳಿನಲ್ಲಿ ಬಿಟ್ಟು ಒಂದು ಬಾಣವನ್ನೆಸೆಯುವಷ್ಟು ದೂರಹೋಗಿ ಕುಳಿತುಕೊಂಡು ಗಟ್ಟಿಯಾಗಿ ಅತ್ತಳು.</verse>
				<verse number="17">ಇತ್ತ ಆ ಹುಡುಗನ ಕೂಗು ದೇವರಿಗೆ ಕೇಳಿಸಿತು. ದೇವದೂತನು ಆಕಾಶದಿಂದ ಹಾಗರಳನ್ನು ಕರೆದು, “ಹಾಗರಳೇ, ನಿನಗೇನು ಆಯಿತು? ಅಂಜಬೇಡ; ಆ ಹುಡುಗನು ಬಿದ್ದು ಇರುವ ಸ್ಥಳದಿಂದಲೇ ಅವನ ಕೂಗು ದೇವರನ್ನು ಮುಟ್ಟಿತು;</verse>
				<verse number="18">ನೀನೆದ್ದು ಹೋಗಿ ಅವನನ್ನು ಎತ್ತಿಕೊ; ಅವನನ್ನು ಕೈ ಬಿಡಬೇಡ; ಅವನಿಂದ ಒಂದು ದೊಡ್ಡ ರಾಷ್ಟ್ರ ಉತ್ಪತ್ತಿಯಾಗುವಂತೆ ಮಾಡುತ್ತೇನೆ,” ಎಂದು ಹೇಳಿದನು.</verse>
				<verse number="19">ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದರು; ನೀರಿನ ಬಾವಿಯೊಂದು ಅವಳಿಗೆ ಕಾಣಿಸಿತು; ತಿತ್ತಿಯಲ್ಲಿ ನೀರನ್ನು ತುಂಬಿಸಿಕೊಂಡು ಹೋಗಿ ಆ ಹುಡುಗನಿಗೆ ಕುಡಿಸಿದಳು.</verse>
				<verse number="20">ಹುಡುಗನ ಸಂಗಡ ದೇವರಿದ್ದರು.</verse>
				<verse number="21">ಪಾರಾನಿನ ಅರಣ್ಯ ಅವನ ವಾಸಸ್ಥಳವಾಯಿತು. ಅವನ ತಾಯಿ ಈಜಿಪ್ಟಿನಿಂದ ಒಬ್ಬ ಹೆಣ್ಣನ್ನು ತರಿಸಿ ಮದುವೆಮಾಡಿಸಿದಳು.</verse>
				<verse number="22">ಆ ದಿನಗಳಲ್ಲಿ ಅಬೀಮೆಲೆಕನು ತನ್ನ ಸೇನಾಪತಿಯಾದ ಫೀಕೋಲನ ಸಮೇತ ಅಬ್ರಹಾಮನ ಬಳಿಗೆ ಬಂದು, “ನೀನು ಮಾಡುವ ಕೆಲಸಕಾರ್ಯಗಳಲ್ಲೆಲ್ಲಾ ದೇವರು ನಿನ್ನ ಸಂಗಡ ಇದ್ದಾರೆ.</verse>
				<verse number="23">ಆದುದರಿಂದ ನೀನು ಈ ಸ್ಥಳದಲ್ಲಿ ನನ್ನೊಂದಿಗೆ ಒಂದು ಒಪ್ಪಂದಕ್ಕೆ ಬರಬೇಕು: ಅದೇನೆಂದರೆ - ನನಗಾಗಲಿ ನನ್ನ ಪುತ್ರಪೌತ್ರರಿಗಾಗಲಿ ಏನೂ ಅನ್ಯಾಯ ಮಾಡಬಾರದು; ನಾನು ನಿನಗೆ ಒಳ್ಳೆಯದನ್ನೇ ಮಾಡಿದಂತೆ ನನಗೂ, ನೀನು ವಾಸಮಾಡುತ್ತಿರುವ ಈ ನಾಡಿಗೂ ಒಳ್ಳೆಯದನ್ನೇ ಮಾಡಬೇಕು. ಹೀಗೆ ಮಾಡುವುದಾಗಿ ದೇವರ ಮೇಲೆ ಪ್ರಮಾಣಮಾಡಬೇಕು,” ಎಂದು ಕೇಳಿಕೊಂಡನು.</verse>
				<verse number="24">ಅದಕ್ಕೆ ಅಬ್ರಹಾಮನು, “ಹಾಗೆಯೇ ಪ್ರಮಾಣಮಾಡುತ್ತೇನೆ,” ಎಂದನು.</verse>
				<verse number="25">ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲಾತ್ಕಾರದಿಂದ ಸ್ವಾಧೀನಪಡಿಸಿಕೊಂಡಿದ್ದರು.</verse>
				<verse number="26">ಅಬೀಮೆಲೆಕನು, “ಈ ಕೃತ್ಯವನ್ನು ಮಾಡಿದವರು ಯಾರೆಂದು ನಾನರಿಯೆ; ನೀನೂ ನನಗೆ ತಿಳಿಸಲಿಲ್ಲ; ಇಲ್ಲಿಯವರೆಗೆ ನಾನು ಈ ಸಂಗತಿಯನ್ನು ಕೇಳಿಯೂ ಇಲ್ಲ,” ಎಂದನು.</verse>
				<verse number="27">ಆಗ ಅಬ್ರಹಾಮನು ಅಬೀಮೆಲೆಕನಿಗೆ ದನಕುರಿಗಳನ್ನು ದಾನಮಾಡಿದನು. ಹೀಗೆ ಅವರಿಬ್ಬರು ಒಂದು ಒಪ್ಪಂದ ಮಾಡಿಕೊಂಡರು.</verse>
				<verse number="28">ಆದರೆ ಅಬ್ರಹಾಮನು ಹಿಂಡಿನ ಏಳು ಕುರಿಮರಿಗಳನ್ನು ಪ್ರತ್ಯೇಕವಾಗಿ ಇರಿಸಿದನು.</verse>
				<verse number="29">ಅಬೀಮೆಲೆಕನು, “ನೀನು ಪ್ರತ್ಯೇಕವಾಗಿರಿಸಿರುವ ಈ ಏಳು ಕುರಿಮರಿಗಳು ಏತಕ್ಕೆ?” ಎಂದು ವಿಚಾರಿಸಿದನು.</verse>
				<verse number="30">ಅದಕ್ಕೆ ಅಬ್ರಹಾಮನು, “ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ಈ ಏಳು ಕುರಿಮರಿಗಳನ್ನು ನನ್ನ ಕೈಯಿಂದ ನೀನು ಸ್ವೀಕರಿಸಬೇಕು,” ಎಂದನು.</verse>
				<verse number="31">ಹೀಗೆ ಅವರಿಬ್ಬರು ಅಲ್ಲಿ ಪ್ರಮಾಣಮಾಡಿದ್ದ ಕಾರಣ, ಆ ಸ್ಥಳಕ್ಕೆ ‘ಬೇರ್ಷೆಬ’ ಎಂದು ಹೆಸರಾಯಿತು.</verse>
				<verse number="32">ಬೇರ್ಷೆಬದಲ್ಲಿ ಅವರು ಒಪ್ಪಂದಮಾಡಿಕೊಂಡ ತರುವಾಯ ಅಬೀಮೆಲೆಕನೂ ಅವನ ಸೇನಾಪತಿ ಫೀಕೋಲನು ಫಿಲಿಷ್ಟಿಯಕ್ಕೆ ಹಿಂದಿರುಗಿದರು.</verse>
				<verse number="33">ಅಬ್ರಹಾಮನು ಆ ಬೇರ್ಷೆಬದಲ್ಲೇ ಒಂದು ಪಿಚುಲ ವೃಕ್ಷವನ್ನು ನೆಟ್ಟು ನಿತ್ಯದೇವರಾದ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ, ಅಲ್ಲಿ ಆರಾಧನೆ ಮಾಡಿದನು.</verse>
				<verse number="34">ಅಬ್ರಹಾಮನು ಫಿಲಿಷ್ಟಿಯರ ಆ ಪ್ರಾಂತ್ಯದಲ್ಲಿ ಬಹುಕಾಲ ಪ್ರವಾಸಿಯಾಗಿದ್ದನು.</verse>
			</chapter>
			<chapter number="22">
				<verse number="1">ಈ ಘಟನೆಗಳಾದ ಬಳಿಕ ದೇವರು ಅಬ್ರಹಾಮನನ್ನು ಪರೀಕ್ಷಿಸುವುದಕ್ಕೋಸ್ಕರ, “ಅಬ್ರಹಾಮನೇ,” ಎಂದು ಕರೆದರು. ಅವನು “ಇಗೋ, ಸಿದ್ಧನಿದ್ದೇನೆ” ಎಂದನು.</verse>
				<verse number="2">ಆಗ ದೇವರು, “ನಿನಗೆ ಒಬ್ಬನೇ ಒಬ್ಬನೂ ಮುದ್ದುಮಗನೂ ಆದ ಇಸಾಕನನ್ನು ಕರೆದುಕೊಂಡು ಮೊರೀಯ ಪ್ರಾಂತಕ್ಕೆ ಹೋಗು. ಅಲ್ಲಿ ನಾನು ತೋರಿಸುವ ಬೆಟ್ಟದ ಮೇಲೆ ಅವನನ್ನು ದಹನಬಲಿಯಾಗಿ ಅರ್ಪಿಸು” ಎಂದರು.</verse>
				<verse number="3">ಅಬ್ರಹಾಮನು ಮುಂಜಾನೆಯೇ ಎದ್ದು ತನ್ನ ಹೇಸರಗತ್ತೆಗೆ ತಡಿಹಾಕಿಸಿ ಹೋಮಬಲಿಗೆ ಬೇಕಾದ ಕಟ್ಟಿಗೆಯನ್ನು ಸಿಗಿದು ಸಿದ್ಧಮಾಡಿಕೊಂಡು ಸೇವಕರಿಬ್ಬರನ್ನು ಹಾಗೂ ತನ್ನ ಮಗ ಇಸಾಕನನ್ನು ಕರೆದುಕೊಂಡು ದೇವರು ಹೇಳಿದ ಸ್ಥಳಕ್ಕೆ ಹೊರಟನು.</verse>
				<verse number="4">ಮೂರನೆಯ ದಿನ ಅಬ್ರಹಾಮನು ಕಣ್ಣೆತ್ತಿ ನೋಡಿದಾಗ ದೂರದಲ್ಲಿ ಆ ಸ್ಥಳ ಕಾಣಿಸಿತು.</verse>
				<verse number="5">ಅವನು ತನ್ನ ಸೇವಕರಿಗೆ, “ನೀವು ಇಲ್ಲೇ ಕತ್ತೆಯನ್ನು ನೋಡಿಕೊಂಡಿರಿ; ನಾನೂ ನನ್ನ ಮಗನೂ ಅಲ್ಲಿಗೆ ಹೋಗಿ ದೇವಾರಾಧನೆ ಮಾಡಿಕೊಂಡು ಪುನಃ ಇಲ್ಲಗೆ ಬರುತ್ತೇವೆ,” ಎಂದು ಹೇಳಿದನು.</verse>
				<verse number="6">ಅಬ್ರಹಾಮನು ದಹನಬಲಿಗೆ ಬೇಕಾದ ಕಟ್ಟಿಗೆಯನ್ನು ತನ್ನ ಮಗ ಇಸಾಕನ ಮೇಲೆ ಹೊರಿಸಿದನು; ಬೆಂಕಿಯನ್ನು ಹಾಗೂ ಕತ್ತಿಯನ್ನು ತನ್ನ ಕೈಯಲ್ಲೇ ತೆಗೆದುಕೊಂಡನು. ಇಬ್ಬರೂ ಅಲ್ಲಿಂದ ಮುಂದಕ್ಕೆ ಹೊರಟರು.</verse>
				<verse number="7">ಹೋಗುತ್ತಾ ಇದ್ದಾಗ ಇಸಾಕನು ತಂದೆ ಅಬ್ರಹಾಮನನ್ನು, “ಅಪ್ಪಾ” ಎಂದು ಕರೆದ; “ಏನು ಮಗನೇ?” ಎಂದ ಅಬ್ರಹಾಮ. ಇಸಾಕನು, “ಬೆಂಕಿ-ಕಟ್ಟಿಗೆಯೇನೋ ಇದೆ; ಆದರೆ ದಹನಬಲಿಗೆ ಬೇಕಾದ ಕುರಿಮರಿ ಎಲ್ಲಿ?” ಎಂದು ಕೇಳಿದ.</verse>
				<verse number="8">ಅದಕ್ಕೆ ಅಬ್ರಹಾಮನು, “ಬಲಿಗೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುತ್ತಾರೆ, ಮಗನೇ,” ಎಂದು ಉತ್ತರಕೊಟ್ಟ. ಅವರಿಬ್ಬರೂ ಹಾಗೇ ಮುಂದಕ್ಕೆ ಸಾಗಿದರು.</verse>
				<verse number="9">ದೇವರು ಹೇಳಿದ ಸ್ಥಳಕ್ಕೆ ಬಂದು ಸೇರಿದಾಗ ಅಬ್ರಹಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿದ. ಕಟ್ಟಿಗೆಯನ್ನು ಅದರ ಮೇಲೆ ಒಟ್ಟಿ, ಮಗ ಇಸಾಕನ ಕೈಕಾಲುಗಳನ್ನು ಬಿಗಿದು, ಕಟ್ಟಿಗೆಗಳ ಮೇಲೆ ಅವನನ್ನು ಕೆಡವಿದ.</verse>
				<verse number="10">ಬಳಿಕ ಮಗನನ್ನು ವಧಿಸಲು ಕೈಚಾಚಿ ಕತ್ತಿಯನ್ನು ಎತ್ತಿದ.</verse>
				<verse number="11">ಆದರೆ ಸರ್ವೇಶ್ವರನ ದೂತನು ಆಕಾಶದಿಂದ, \ಅಬ್ರಹಾಮನೇ, ಹೇ ಅಬ್ರಹಾಮನೇ\ ಎಂದು ಕರೆದನು. ಅದಕ್ಕೆ ಅಬ್ರಹಾಮನು, “ಇಗೋ ಸಿದ್ಧನಿದ್ದೇನೆ” ಎಂದ.</verse>
				<verse number="12">ದೂತನು ಅವನಿಗೆ, \ಹುಡುಗನ ಮೇಲೆ ಕೈಯೆತ್ತಬೇಡ; ಅವನಿಗೆ ಯಾವ ಹಾನಿಯನ್ನೂ ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿಂತೆಗೆಯಲಿಲ್ಲ; ಎಂತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ನನಗೆ ಚೆನ್ನಾಗಿ ಗೊತ್ತಾಯಿತು,” ಎಂದು ಹೇಳಿದನು.</verse>
				<verse number="13">ಅಬ್ರಹಾಮನು ಕಣ್ಣೆತ್ತಿ ನೋಡಿದ. ತನ್ನ ಹಿಂದುಗಡೆ ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿಕೊಂಡಿತ್ತು. ಅವನು ಹೋಗಿ ಅದನ್ನು ಹಿಡಿದು ತಂದು ತನ್ನ ಮಗನಿಗೆ ಬದಲಾಗಿ ಅದನ್ನು ದಹನಬಲಿಯನ್ನಾಗಿ ಅರ್ಪಿಸಿದ.</verse>
				<verse number="14">ಆ ಸ್ಥಳಕ್ಕೆ “ಯೆಹೋವ ಯೀರೆ\ ಎಂದು ಹೆಸರಿಟ್ಟ.</verse>
				<verse number="15">“ಬೆಟ್ಟದ ಮೇಲೆ ಸರ್ವೇಶ್ವರ ಸ್ವಾಮಿಯೇ ಒದಗಿಸುತ್ತಾರೆ” ಎಂಬ ಹೇಳಿಕೆ ಇಂದಿಗೂ ರೂಢಿಯಲ್ಲಿದೆ. ಸರ್ವೇಶ್ವರ ಸ್ವಾಮಿಯ ದೂತನು ಆಕಾಶದಿಂದ ಮತ್ತೊಮ್ಮೆ ಅಬ್ರಹಾಮನನ್ನು ಕರೆದು,</verse>
				<verse number="16">“ಸರ್ವೇಶ್ವರನ ವಾಕ್ಯವನ್ನು ಕೇಳು; ನೀನು ನಿನ್ನ ಒಬ್ಬನೇ ಮಗನನ್ನು ಬಲಿಕೊಡಲು ಹಿಂತೆಗೆಯದೆ ಹೋದುದರಿಂದ ನಾನು ನಿನ್ನನ್ನು ತಪ್ಪದೆ ಆಶೀರ್ವದಿಸುತ್ತೇನೆ;</verse>
				<verse number="17">ನಿನ್ನ ಸಂತತಿಯನ್ನು ಹೆಚ್ಚಿಸಿಯೇ ಹೆಚ್ಚಿಸುತ್ತೇನೆ; ಅದನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರ ತೀರದ ಮರಳಿನಂತೆಯೂ ಅಸಂಖ್ಯವಾಗಿ ಮಾಡುತ್ತೇನೆ. ಅವರು ಶತ್ರುಗಳ ಪಟ್ಟಣಗಳನ್ನು ಸ್ವಾಧೀನಪಡಿಸಿಕೊಳ್ಳುವರು.</verse>
				<verse number="18">ನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು.</verse>
				<verse number="19">ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಮರಳಿ ಬಂದನು. ಅವರೆಲ್ಲರೂ ಜೊತೆಯಾಗಿ ಬೇರ್ಷೆಬಕ್ಕೆ ಹೋದರು. ಅಲ್ಲೇ ಅಬ್ರಹಾಮನು ವಾಸಮಾಡುತ್ತಿದ್ದನು.</verse>
				<verse number="20">ಕೆಲವು ಕಾಲವಾದ ಮೇಲೆ ಅಬ್ರಹಾಮನಿಗೆ ತನ್ನ ತಮ್ಮನಾದ ನಾಹೋರನಿಗೆ ಮಿಲ್ಕಳಿಂದ ಮಕ್ಕಳಾದುವೆಂಬ ಸಮಾಚಾರ ಮುಟ್ಟಿತು.</verse>
				<verse number="21">ಅವರುಗಳ ಹೆಸರು ಇವು - ಚೊಚ್ಚಲವಾದ ಊಚ್, ಇವನ ತಮ್ಮ ಬೂಚ್, (ಆರಾಮನ ತಂದೆಯಾದ) ಕೆಮೂವೇಲ್,</verse>
				<verse number="22">ಕೆಸೆದ್, ಹಜೋ, ಪಿಲ್ದಾಷ್, ಇದ್ಲಾಫ್ ಮತ್ತು ಬೆತೂವೇಲ್.</verse>
				<verse number="23">ಬೆತೂವೇಲನು ರೆಬೆಕ್ಕಳ ತಂದೆ. ಈ ಎಂಟುಮಂದಿಯನ್ನು ಮಿಲ್ಕಳು ಅಬ್ರಹಾಮನ ತಮ್ಮನಾದ ನಾಹೋರನಿಗೆ ಹೆತ್ತಳು.</verse>
				<verse number="24">ಇದೂ ಅಲ್ಲದೆ ಅವನ ಉಪಪತ್ನಿಯಾದ ರೂಮಳೆಂಬವಳು ಟೆಬಹ, ಗಹಮ್, ತಹಷ್, ಮಾಕಾ ಎಂಬುವರನ್ನು ಹೆತ್ತಳು.</verse>
			</chapter>
			<chapter number="23">
				<verse number="1">ಸಾರಳು ನೂರಿಪ್ಪತ್ತೇಳು ವರುಷ ಬದುಕಿದ್ದಳು.</verse>
				<verse number="2">ಇಷ್ಟು ವರ್ಷಗಳಾದ ಮೇಲೆ ಆಕೆ ಕಾನಾನ್ ನಾಡಿನ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಕಾಲವಾದಳು. ಅಬ್ರಹಾಮನು ಅಲ್ಲಿಗೆ ಬಂದು ಅವಳಿಗಾಗಿ ಕಣ್ಣೀರಿಟ್ಟು ಗೋಳಾಡಿದನು.</verse>
				<verse number="3">ಅನಂತರ ಅವನು ಶವದ ಬಳಿಯಿಂದ ಎದ್ದು ಹಿತ್ತಿಯರ ಬಳಿಗೆ ಬಂದು,</verse>
				<verse number="4">“ನಿಮ್ಮ ಮಧ್ಯೆ ನಾನೊಬ್ಬ ಹೊರನಾಡಿಗ, ಒಬ್ಬ ಪ್ರವಾಸಿ, ಮೃತಳಾಗಿರುವ ನನ್ನ ಪತ್ನಿಯನ್ನು ಸಮಾಧಿ ಮಾಡಲು ಸ್ವಲ್ಪ ಜಮೀನನ್ನು ನನ್ನ ಸ್ವಂತಕ್ಕೆ ಕೊಡಬೇಕೆಂದು ಕೇಳಿಕೊಳ್ಳುತ್ತೇನೆ,” ಎಂದನು.</verse>
				<verse number="5">ಆ ಹಿತ್ತಿಯರು, “ಒಡೆಯಾ, ಇತ್ತ ಕೇಳಿ, ನೀವು ನಮಗೆ ಒಬ್ಬ ಮಹಾರಾಜರಂತೆ ಇದ್ದೀರಿ. ಮೃತಳಾದ ನಿಮ್ಮ ಪತ್ನಿಯ ಶವವನ್ನು ನಮ್ಮಲ್ಲಿರುವ ಶ್ರೇಷ್ಠ ಸಮಾಧಿಗಳೊಂದರಲ್ಲಿ ಭೂಸ್ಥಾಪನೆ ಮಾಡಬಹುದು. ನಮ್ಮಲ್ಲಿ ಸ್ಮಶಾನ ಭೂಮಿಯಿರುವ ಯಾರೂ ನಿಮಗೆ ಕೊಡುವುದಕ್ಕೆ ಹಿಂಜರಿಯುವುದಿಲ್ಲ,” ಎಂದು ಉತ್ತರಕೊಟ್ಟರು.</verse>
				<verse number="6"></verse>
				<verse number="7">ಅಬ್ರಹಾಮನು ಎದ್ದುನಿಂತು ಆ ಹಿತ್ತಿಯ ನಾಡಿಗರಿಗೆ ಬಾಗಿ ನಮಸ್ಕರಿಸಿದನು.</verse>
				<verse number="8">ಅವರೊಡನೆ ಮಾತನ್ನು ಮುಂದುವರಿಸುತ್ತಾ ಅವನು, “ನನ್ನ ಪತ್ನಿಯ ಶವವನ್ನು ಇಲ್ಲಿ ಸಮಾಧಿಮಾಡುವುದು ನಿಮಗೆ ಒಪ್ಪಿಗೆಯಾದರೆ ನನ್ನ ವಿಜ್ಞಾಪನೆ ಇದು: ನೀವು ಜೋಹರನ ಮಗನಾದ ಎಫ್ರೋನನ ಸಂಗಡ ನನ್ನ ಪರವಾಗಿ ಮಾತಾಡಿ,</verse>
				<verse number="9">ಅವನ ಜಮೀನಿನ ಅಂಚಿನಲ್ಲಿರುವ ಮಕ್ಪೇಲದ ಗವಿಯನ್ನು ನನಗೆ ಕೊಡಿಸಬೇಕೆಂದು ವಿನಂತಿಸುತ್ತೇನೆ. ಅವನು ಆ ಸಮಾಧಿಯ ಸ್ಥಳವನ್ನು ನನ್ನ ಸ್ವಂತಕ್ಕೆ ನಿಮ್ಮ ಎದುರಿಗೇ ಬಿಟ್ಟುಕೊಟ್ಟರೆ ಪೂರ್ಣಕ್ರಯವನ್ನು ಕೊಟ್ಟುಬಿಡುತ್ತೇನೆ,” ಎಂದನು.</verse>
				<verse number="10">ಸದ್ಯಕ್ಕೆ ಎಫ್ರೋನನೇ ಅಲ್ಲಿ ಆ ಹಿತ್ತಿಯರ ನಡುವೆ ಕುಳಿತಿದ್ದನು. ಅವನೂ ಒಬ್ಬ ಹಿತ್ತಿಯನಾಗಿದ್ದನು. ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆ ಅವನು ಅಬ್ರಹಾಮನಿಗೆ,</verse>
				<verse number="11">“ಒಡೆಯಾ, ನನ್ನ ಮಾತಿಗೆ ಸ್ವಲ್ಪ ಕಿವಿಗೊಡಿ; ಆ ಜಮೀನನ್ನೂ ಅದರಲ್ಲಿರುವ ಗವಿಯನ್ನೂ ನಿಮಗೆ ದಾನಮಾಡಿಬಿಡುತ್ತೇನೆ; ನನ್ನ ಈ ಜನರ ಮುಂದೆಯೇ ದಾನಕೊಡುತ್ತೇನೆ; ಮೃತಳಾದ ನಿಮ್ಮ ಪತ್ನಿಯನ್ನು ಅದರಲ್ಲಿ ಸಮಾಧಿ ಮಾಡಬಹುದು,” ಎಂದು ಹೇಳಿದನು.</verse>
				<verse number="12">ಅಬ್ರಹಾಮನು ಆ ನಾಡಿಗರಿಗೆ ಬಾಗಿ ವಂದಿಸಿದನು.</verse>
				<verse number="13">ಅವರೆಲ್ಲರ ಮುಂದೆ ಎಫ್ರೋನನನ್ನು ಉದ್ದೇಶಿಸಿ, “ಕೊಡಲು ಇಷ್ಟವಿದ್ದರೆ ದಯವಿಟ್ಟು ನಾನು ಅರಿಕೆ ಮಾಡುವುದನ್ನು ಕೇಳು; ಆ ಜಮೀನಿಗೆ ಕ್ರಯ ಕೊಡುತ್ತೇನೆ; ಆ ಕ್ರಯವನ್ನು ತೆಗೆದುಕೊಳ್ಳಲು ಸಮ್ಮತಿಸಿದರೆ ನನ್ನ ಪತ್ನಿಯನ್ನು ಅಲ್ಲಿ ಸಮಾಧಿ ಮಾಡುತ್ತೇನೆ,” ಎಂದು ಹೇಳಿದನು.</verse>
				<verse number="14">ಅದಕ್ಕೆ ಎಫ್ರೋನನು, “ಒಡೆಯಾ, ನನ್ನ ಮಾತನ್ನು ಆಲಿಸು; ಕೇವಲ ನಾನೂರು ಬೆಳ್ಳಿ ನಾಣ್ಯ ಬಾಳುವ ಆ ಜಮೀನಿನ ವಿಷಯದಲ್ಲಿ ನಿಮಗೂ ನನಗೂ ವಾದವೇತಕ್ಕೆ? ಸಮಾಧಿ ಮಾಡಬಹುದು,” ಎಂದನು.</verse>
				<verse number="15"></verse>
				<verse number="16">ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿ, ಅವನು ಆ ಹಿತ್ತಿಯರ ಮುಂದೆ ಸೂಚಿಸಿದ ನಾನೂರು ಬೆಳ್ಳಿ ನಾಣ್ಯಗಳನ್ನು, ವ್ಯಾಪಾರಿಗಳಲ್ಲಿ ಪ್ರಚಲಿತವಾಗಿದ್ದ ಬೆಳ್ಳಿಯಿಂದ ತೂಕಮಾಡಿ ಕೊಟ್ಟನು.</verse>
				<verse number="17">ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲಕ್ಕೆ ಸೇರಿದ ಎಫ್ರೋನನ ಜಮೀನು, ಅದಕ್ಕೆ ಸೇರಿದ ಗವಿ, ಅದರಲ್ಲಿ ಮತ್ತು ಅದರ ಸುತ್ತಣ ಅಂಚಿನಲ್ಲಿದ್ದ ಮರಗಳು, ಇವೆಲ್ಲವೂ</verse>
				<verse number="18">ಅಬ್ರಹಾಮನಿಗೆ ಸ್ವಂತವೆಂದು ಹಿತ್ತಿಯರಾಗಿದ್ದ ಆ ಊರಿನವರೆಲ್ಲರ ಮುಂದೆಯೇ ತೀರ್ಮಾನವಾಯಿತು.</verse>
				<verse number="19">ಇದಾದ ಮೇಲೆ ಹೆಬ್ರೋನೆಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಜಮೀನಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದನು.</verse>
				<verse number="20">ಆ ಜಮೀನನ್ನೂ ಅದರಲ್ಲಿರುವ ಗವಿಯನ್ನೂ ಅಬ್ರಹಾಮನಿಗೆ ಸ್ವಂತ ಸ್ಮಶಾನಭೂಮಿಯಾಗಲೆಂದು ಸ್ವಾಧೀನಗೊಳಿಸಿದವರು ಆ ಹಿತ್ತಿಯರೇ.</verse>
			</chapter>
			<chapter number="24">
				<verse number="1">ಅಬ್ರಹಾಮನು ಆಗ ತುಂಬು ವಯಸ್ಸಿನ ಮುದುಕ. ಸರ್ವೇಶ್ವರ ಸ್ವಾಮಿ ಅವನ ಎಲ್ಲ ಕೆಲಸಕಾರ್ಯಗಳನ್ನು ಆಶೀರ್ವದಿಸಿದ್ದರು.</verse>
				<verse number="2">ಒಮ್ಮೆ ಅವನು, ತನ್ನ ಆಸ್ತಿಯನ್ನು ನೋಡಿಕೊಳ್ಳುತ್ತಿದ್ದ ಹಿರಿಯ ಸೇವಕನಿಗೆ,</verse>
				<verse number="3">“ನನ್ನ ಮಗ ಇಸಾಕನಿಗೆ ಹೆಣ್ಣನ್ನು ನಾನು ವಾಸಮಾಡುತ್ತಿರುವ ಕಾನಾನ್ಯರಿಂದ ತರಬಾರದು;</verse>
				<verse number="4">ನನ್ನ ಸ್ವಂತ ನಾಡಿಗೂ ನನ್ನ ಬಂಧುಬಳಗದವರ ಬಳಿಗೂ ಹೋಗಿ ಅವರಿಂದಲೇ ಅವನಿಗೆ ಹೆಣ್ಣು ತರಬೇಕು. ಹಾಗೆ ಮಾಡುತ್ತೇನೆಂದು ನೀನು ನನ್ನ ತೊಡೆಯ ಕೆಳಗೆ ಕೈಯಿಟ್ಟು ಇಹಪರಲೋಕಗಳ ಸರ್ವೇಶ್ವರನಾದ ದೇವರ ಮೇಲೆ ಪ್ರಮಾಣ ಮಾಡಬೇಕು,” ಎಂದು ಹೇಳಿದನು.</verse>
				<verse number="5">ಅದಕ್ಕೆ ಆ ಸೇವಕ, “ಒಂದು ವೇಳೆ ಆ ಕನ್ಯೆಗೆ ಈ ನಾಡಿಗೆ ನನ್ನೊಡನೆ ಬರಲು ಇಷ್ಟವಿಲ್ಲದೆ ಹೋದೀತು. ಆಗ, ನೀವು ಬಿಟ್ಟುಬಂದ ನಾಡಿಗೆ ನಿಮ್ಮ ಮಗನನ್ನು ಮರಳಿ ಕರೆದುಕೊಂಡು ಹೋಗಬಹುದೆ?” ಎಂದು ವಿಚಾರಿಸಿದ.</verse>
				<verse number="6">ಅಬ್ರಹಾಮನು ಅವನಿಗೆ, “ಅದೆಂದಿಗೂ ಕೂಡದು; ಅಲ್ಲಿಗೆ ನನ್ನ ಮಗನನ್ನು ಕರೆದುಕೊಂಡು ಹೋಗಲೇ ಬಾರದು.</verse>
				<verse number="7">ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ನಾಡಿನಿಂದಲೂ ನನ್ನನ್ನು ಇಲ್ಲಿಗೆ ಕರೆತಂದು, ‘ನಿನ್ನ ಸಂತತಿಗೆ ಈ ನಾಡನ್ನು ಕೊಡುತ್ತೇನೆ,’ ಎಂದು ಪರಲೋಕ ದೇವರಾದ ಸರ್ವೇಶ್ವರ ಸ್ವಾಮಿ ಪ್ರಮಾಣಮಾಡಿ ಹೇಳಿದ್ದಾರೆ. ಅವರೇ ತಮ್ಮ ದೂತನನ್ನು ನಿನ್ನ ಮುಂದೆ ಕಳುಹಿಸಿ, ನೀನು ಅಲ್ಲಿಂದ ನನ್ನ ಮಗನಿಗೆ ಹೆಣ್ಣು ತರುವುದಕ್ಕೆ ಅನುಕೂಲ ಮಾಡಿಕೊಡುವರು.</verse>
				<verse number="8">ಇಲ್ಲಿಗೆ ನಿನ್ನ ಸಂಗಡ ಬರಲು ಆ ಕನ್ಯೆಗೆ ಇಷ್ಟವಿಲ್ಲದೆಹೋದರೆ, ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವೆ. ಹೇಗೂ ನನ್ನ ಮಗನನ್ನು ಮರಳಿ ಅಲ್ಲಿಗೆ ಕರೆದುಕೊಂಡು ಹೋಗಕೂಡದು,” ಎಂದು ಮತ್ತೊಮ್ಮೆ ಒತ್ತಿ ಹೇಳಿದನು.</verse>
				<verse number="9">ಆಗ ಆ ಸೇವಕ ತನ್ನ ಒಡೆಯನಾದ ಅಬ್ರಹಾಮನ ತೊಡೆಯ ಕೆಳಗೆ ಕೈಯಿಟ್ಟು ಅವನು ಹೇಳಿದಂತೆಯೇ ಪ್ರಮಾಣ ಮಾಡಿದನು.</verse>
				<verse number="10">ತರುವಾಯ ಆ ಸೇವಕ ತನ್ನ ಒಡೆಯನ ಒಂಟೆಗಳಲ್ಲಿ ಹತ್ತನ್ನು ಸಿದ್ಧಮಾಡಿಕೊಂಡು, ಅವನ ಆಸ್ತಿಯಿಂದ ಶ್ರೇಷ್ಠವಾದ ಒಡವೆಗಳನ್ನು ತೆಗೆದುಕೊಂಡು ಹೊರಟನು. ಎರಡು ನದಿಗಳ ಮಧ್ಯೆ ಇರುವ ಉತ್ತರ ಮೆಸಪೊಟೇಮಿಯಾ ನಾಡಿಗೆ ಬಂದನು. ಅಲ್ಲಿಂದ ನಾಹೋರನು ವಾಸಿಸಿದ್ದ ಊರನ್ನು ಮುಟ್ಟಿದನು.</verse>
				<verse number="11">ಸಂಜೆ, ಹೆಣ್ಣುಮಕ್ಕಳು ನೀರು ಹೊರುವುದಕ್ಕೆ ಬರುವ ವೇಳೆಗೆ, ಅವನು ಊರ ಹೊರಗಡೆ ಬಾವಿಯ ಬಳಿ ಒಂಟೆಗಳನ್ನು ಮಲಗಿಸಿದನು.</verse>
				<verse number="12">“ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರಾ, ಈ ದಿನ ನಾನು ಬಂದ ಕಾರ್ಯವನ್ನು ಕೈಗೂಡಿಸಿ, ನನ್ನೊಡೆಯ ಅಬ್ರಹಾಮನಿಗೆ ಉಪಕಾರಮಾಡಬೇಕೆಂದು ಪ್ರಾರ್ಥಸುತ್ತೇನೆ.</verse>
				<verse number="13">ಇಗೋ, ನೀರಿನ ಬುಗ್ಗೆಯ ಬಳಿಯಲ್ಲೇ ನಿಂತಿದ್ದೇನೆ; ಈ ಊರಿನ ಹೆಣ್ಣುಮಕ್ಕಳು ನೀರಿಗೆ ಬರುತ್ತಾರೆ.</verse>
				<verse number="14">ನಾನು ಯಾವ ಹುಡುಗಿ಼ಗೆ ‘ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ಕುಡಿಯುವುದಕ್ಕೆ ಕೊಡು’ ಎಂದು ಹೇಳುವಾಗ ‘ನೀನೂ ಕುಡಿ, ನಿನ್ನ ಒಂಟೆಗಳಿಗೂ ಕುಡಿಯ ಕೊಡುತ್ತೇನೆ’ ಎನ್ನುತ್ತಾಳೋ ಅವಳೇ ನಿಮ್ಮ ದಾಸ ಇಸಾಕನಿಗೆ ನೀವು ಚುನಾಯಿಸಿರುವ ಕನ್ಯೆಯಾಗಲಿ. ನನ್ನೊಡೆಯನ ಮೇಲೆ ನಿಮ್ಮ ದಯೆಯಿದೆ ಎಂದು ಇದರಿಂದ ಗೊತ್ತಾಗುವುದು,” ಎಂದುಕೊಂಡನು.</verse>
				<verse number="15">ಆತನು ಹೀಗೆ ಹೇಳಿಕೊಳ್ಳುತ್ತಿರುವಾಗಲೇ ರೆಬೆಕ್ಕಳು ಹೆಗಲ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು. ಆಕೆ, ಅಬ್ರಹಾಮನ ತಮ್ಮನಾದ ನಾಹೋರನಿಗೆ ಹೆಂಡತಿಯಾಗಿದ್ದ ಮಿಲ್ಕಳ ಮಗ ಬೆತೂವೇಲನ ಮಗಳು.</verse>
				<verse number="16">ಬಲು ಚೆಲುವೆ; ಯಾವ ಪುರುಷನ ಸಂಸರ್ಗವೂ ಇಲ್ಲದ ಕನ್ನಿಕೆ, ಬುಗ್ಗೆಯ ಬಳಿಗೆ ಇಳಿದು ಕೊಡದಲ್ಲಿ ನೀರು ತುಂಬಿಸಿಕೊಂಡು ಮೇಲಕ್ಕೆ ಬಂದಳು.</verse>
				<verse number="17">ಆ ಸೇವಕನು ಅವಳಿಗೆದುರಾಗಿ ಓಡಿಬಂದು, “ಅಮ್ಮಾ, ದಯಮಾಡಿ ಕೊಡದಿಂದ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ಕೊಡು,” ಎಂದು ಕೇಳಿದನು.</verse>
				<verse number="18">ಆಕೆ, “ಕುಡಿಯಪ್ಪಾ” ಎಂದು ಹೇಳಿ ಕೂಡಲೆ ಕೊಡವನ್ನು ಕೈಗಿಳಿಸಿ ಕುಡಿಯ ಕೊಟ್ಟಳು.</verse>
				<verse number="19">ಅವನು ಕುಡಿದಾದ ಮೇಲೆ, “ನಿನ್ನ ಒಂಟೆಗಳಿಗೂ ಬೇಕಾದಷ್ಟು ನೀರು ತಂದುಕೊಡುತ್ತೇನೆ,” ಎಂದು ಹೇಳಿ,</verse>
				<verse number="20">ಕೊಡದ ನೀರನ್ನು ತೊಟ್ಟಿಗೆ ಹೊಯ್ದು ಮತ್ತೆ ನೀರು ತರುವುದಕ್ಕೆ ಬಾವಿಗೆ ಓಡಿದಳು. ಹೀಗೆ ಅವನ ಎಲ್ಲ ಒಂಟೆಗಳಿಗೂ ತಂದುಕೊಟ್ಟಳು.</verse>
				<verse number="21">ಆ ಮನುಷ್ಯ, ತನ್ನ ಪ್ರಯಾಣವನ್ನು ಸರ್ವೇಶ್ವರ ಸಫಲಗೊಳಿಸಿದರೋ ಇಲ್ಲವೋ ಎಂದು ಯೋಚಿಸುತ್ತಾ ಏನೂ ಮಾತಾಡದೆ ಆಕೆಯನ್ನೇ ದೃಷ್ಟಿಸಿ ನೋಡುತ್ತಿದ್ದನು.</verse>
				<verse number="22">ಒಂಟೆಗಳು ಕುಡಿದಾದ ನಂತರ ಅವನು ಆಕೆಯ ಮೂಗಿಗೆ ಅರ್ಧ ತೊಲೆಯ ತೂಕವುಳ್ಳ ಒಂದು ಚಿನ್ನದ ಮೂಗುತಿಯನ್ನೂ ಕೈಗಳಿಗೆ ಹತ್ತು ತೊಲೆಯ ತೂಕವುಳ್ಳ ಎರಡು ಚಿನ್ನದ ಬಳೆಗಳನ್ನೂ ತೊಡಿಸಿದನು.</verse>
				<verse number="23">\ನೀನು ಯಾರ ಮಗಳು? ದಯವಿಟ್ಟು ಹೇಳು; ನಿನ್ನ ತಂದೆಯ ಮನೆಯಲ್ಲಿ ತಂಗುವುದಕ್ಕೆ ಸ್ಥಳವಿದೆಯೇ?” ಎಂದು ಕೇಳಿದನು.</verse>
				<verse number="24">ಅದಕ್ಕೆ ಆಕೆ, “ನಾನು ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು.</verse>
				<verse number="25">ಹುಲ್ಲು, ಮೇವು ನಮ್ಮಲ್ಲಿ ಬಹಳ ಉಂಟು; ತಂಗುವುದಕ್ಕೆ ಸ್ಥಳವಿದೆ,” ಎಂದು ಉತ್ತರಕೊಟ್ಟಳು.</verse>
				<verse number="26">ಇದನ್ನು ಕೇಳಿದ ಆ ಮನುಷ್ಯ ತಲೆಬಾಗಿ ಸರ್ವೇಶ್ವರನನ್ನು ಆರಾಧಿಸಿದನು.</verse>
				<verse number="27">“ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರ ಸ್ವಾಮಿಗೆ ಸ್ತೋತ್ರಸಲ್ಲಲಿ! ಅವರು ನನ್ನೊಡೆಯನ ಮೇಲಿಟ್ಟಿದ್ದ ಅಚಲ ಪ್ರೀತಿ ಪ್ರಾಮಾಣಿಕತೆಯನ್ನು ಕೈಬಿಟ್ಟಿಲ್ಲ. ನನ್ನೊಡೆಯನ ಬಂಧುಬಳಗದವರ ಮನೆಗೆ ನನ್ನನ್ನು ನೆಟ್ಟಗೆ ಕರೆತಂದಿದ್ದಾರೆ,” ಎಂದನು.</verse>
				<verse number="28">ಆ ಹುಡುಗಿ ಓಡಿಹೋಗಿ ನಡೆದ ಸಂಗತಿಯನ್ನು ತಾಯಿಯ ಮನೆಯಲ್ಲಿದ್ದ ಎಲ್ಲರಿಗೂ ತಿಳಿಸಿದಳು.</verse>
				<verse number="29">ರೆಬೆಕ್ಕಳಿಗೆ ಲಾಬಾನ್‍ ಎಂಬ ಅಣ್ಣ ಇದ್ದನು.</verse>
				<verse number="30">ಅವನು ತನ್ನ ತಂಗಿಯ ಮೇಲಿದ್ದ ಮೂಗುತಿಯನ್ನೂ ಬಳೆಗಳನ್ನೂ ನೋಡಿದನು. ಆ ಮನುಷ್ಯ ಆಕೆಗೆ ಹೇಳಿದ ಮಾತುಗಳನ್ನು ಆಕೆಯಿಂದಲೇ ಕೇಳಿ ತಿಳಿದುಕೊಂಡನು. ಬಳಿಕ ಬುಗ್ಗೆಯ ಬಳಿ ಒಂಟೆಗಳೊಂದಿಗೆ ನಿಂತಿದ್ದ ಆ ಮನುಷ್ಯನ ಬಳಿಗೆ ಓಡಿಬಂದನು.</verse>
				<verse number="31">“ಸರ್ವೇಶ್ವರ ಸ್ವಾಮಿಯಿಂದ ಆಶೀರ್ವಾದ ಪಡೆದವನೇ, ಮನೆಗೆ ಬಾ; ಇಲ್ಲಿ ಹೊರಗೇಕೆ ನಿಂತಿರುವೆ? ನಿನಗೆ ಮನೆ ಸಿದ್ಧವಾಗಿದೆ; ಒಂಟೆಗಳಿಗೆ ಬೇಕಾದ ಸ್ಥಳವಿದೆ,” ಎಂದು ಕರೆದನು.</verse>
				<verse number="32">ಆ ಮನುಷ್ಯ ಮನೆಗೆ ಬಂದಾಗ ಲಾಬಾನನು ಒಂಟೆಗಳ ಹೊರೆಯನ್ನು ಇಳಿಸಿ, ಅವುಗಳಿಗೆ ಹುಲ್ಲು ಮೇವನ್ನು ಕೊಡಿಸಿದನು. ಆ ಮನುಷ್ಯನ ಮತ್ತು ಅವನ ಸಂಗಡಿಗರ ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ತರಿಸಿದನು.</verse>
				<verse number="33">ಅನಂತರ ಊಟ ಬಡಿಸಲಾಯಿತು. ಆದರೆ ಆ ಮನುಷ್ಯ, “ನಾನು ಬಂದ ಕೆಲಸವನ್ನು ಹೇಳದೆ ಊಟ ಮಾಡುವುದಿಲ್ಲ,” ಎಂದುಬಿಟ್ಟನು. ಆಗ ಲಾಬಾನನು, “ಅದೇನು ಹೇಳು,” ಎಂದನು.</verse>
				<verse number="34">ಅವನು, “ನಾನು ಅಬ್ರಹಾಮನ ಸೇವಕ.</verse>
				<verse number="35">ಸರ್ವೇಶ್ವರ ನನ್ನೊಡೆಯನನ್ನು ಯಥೇಚ್ಛವಾಗಿ ಆಶೀರ್ವದಿಸಿದ್ದಾರೆ; ದನಕುರಿಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಹೇಸರಗತ್ತೆಗಳನ್ನೂ ಕೊಟ್ಟಿದ್ದಾರೆ. ನನ್ನೊಡೆಯ ಐಶ್ವರ್ಯವಂತ.</verse>
				<verse number="36">ಆತನ ಪತ್ನಿಯಾದ ಸಾರಳು, ವೃದ್ಧಾಪ್ಯದಲ್ಲಿ ಆತನಿಗೆ ಒಬ್ಬ ಮಗನನ್ನು ಹೆತ್ತಳು; ಆ ಮಗನಿಗೆ ನನ್ನೊಡೆಯ ತನಗಿರುವ ಸಮಸ್ತವನ್ನೂ ಕೊಟ್ಟಿದ್ದಾರೆ.</verse>
				<verse number="37">ಅವರು ನನಗೆ, 'ನಾನು ವಾಸವಾಗಿರುವ ಕಾನಾನ್ ನಾಡಿನಿಂದ ನನ್ನ ಮಗನಿಗೆ ಹೆಣ್ಣನ್ನು ತರಬೇಡ;</verse>
				<verse number="38">ನನ್ನ ತಂದೆಯ ಮನೆಗೂ ನನ್ನ ಬಂಧುಬಳಗದವರ ಬಳಿಗೂ ಹೋಗಿ ಅವರಿಂದಲೇ ಹೆಣ್ಣನ್ನು ತರಬೇಕು’ ಎಂದು ಹೇಳಿ ನನ್ನಿಂದ ಪ್ರಮಾಣ ಮಾಡಿಸಿಕೊಂಡಿದ್ದಾರೆ.</verse>
				<verse number="39">ನಾನು ಅವರಿಗೆ, ‘ಒಂದು ವೇಳೆ ಇಲ್ಲಿಗೆ ನನ್ನೊಡನೆ ಬರಲು ಆ ಕನ್ಯೆಗೆ ಮನಸ್ಸಿಲ್ಲದೆ ಹೋದೀತು’ ಎಂದು ಹೇಳಿದೆ.</verse>
				<verse number="40">ಅದಕ್ಕೆ ಅವರು, ‘ಯಾವ ಸರ್ವೇಶ್ವರ ಸ್ವಾಮಿಗೆ ನಾನು ವಿಧೇಯನಾಗಿ ನಡೆದುಕೊಂಡೆನೋ ಅವರು ತಮ್ಮ ದೂತನನ್ನು ನಿನ್ನೊಂದಿಗೆ ಕಳುಹಿಸುವರು. ನನ್ನ ತಂದೆಯ ಮನೆತನಕ್ಕೆ ಸೇರಿದ ಬಂಧುಬಳಗದವರಿಂದಲೇ ನನ್ನ ಮಗನಿಗೆ ಹೆಣ್ಣು ತರಲು ನಿನಗೆ ಅನುಕೂಲ ಮಾಡಿಕೊಡುವರು.</verse>
				<verse number="41">ನಾನು ಮಾಡಿಸಿದ ಪ್ರಮಾಣದಿಂದ ನೀನು ಬಿಡುಗಡೆಯಾಗಬೇಕಾದರೆ - ನೀನು ನನ್ನ ಜನರ ಬಳಿಗೆ ಹೋಗಬೇಕು, ಅವರು ಹೆಣ್ಣನ್ನು ಕೊಡುವುದಿಲ್ಲ ಎನ್ನಬೇಕು. ಆಗ ಮಾತ್ರ ನಾನು ಮಾಡಿಸಿದ ಪ್ರಮಾಣದಿಂದ ಬಿಡುಗಡೆಯಾಗಿರುವೆ;’ ಎಂದು ಹೇಳಿದರು.</verse>
				<verse number="42">“ನಾನು ಇಂದು ಈ ಊರಿನ ಬುಗ್ಗೆಯ ಬಳಿಗೆ ಬಂದೆ. ‘ನನ್ನೊಡೆಯ ಅಬ್ರಹಾಮನ ದೇವರಾಗಿರುವ ಸರ್ವೇಶ್ವರಾ, ಇಗೋ, ನೀರಿನ ಬುಗ್ಗೆಯ ಬಳಿಯಲ್ಲೇ ನಿಂತಿದ್ದೇನೆ. ನೀವು ನನ್ನ ಪ್ರಯಾಣವನ್ನು ಸಫಲ ಮಾಡಿದ್ದಾದರೆ</verse>
				<verse number="43">ನೀರಿಗೆ ಬರುವ ಯಾವ ಹುಡುಗಿಗೆ ‘ದಯವಿಟ್ಟು ನಿನ್ನ ಕೊಡದಿಂದ ಸ್ವಲ್ಪ ನೀರನ್ನು ಕುಡಿಯುವುದಕ್ಕೆ ನನಗೆ ಕೊಡು’ ಎಂದು ನಾನು ಹೇಳುವಾಗ ಅವಳು,</verse>
				<verse number="44">\ಕುಡಿಯಪ್ಪಾ, ಮತ್ತು ನಿನ್ನ ಒಂಟೆಗಳಿಗೂ ನೀರು ತಂದುಕೊಡುತ್ತೇನೆ’ ಎನ್ನುವಳೋ ಅವಳೇ ಸರ್ವೇಶ್ವರ ಸ್ವಾಮಿಯಿಂದ ನನ್ನೊಡೆಯನ ಮಗನಿಗೆ ಚುನಾಯಿತಳಾದ ಕನ್ನಿಕೆಯಾಗಿರಲಿ' ಎಂದೆ,</verse>
				<verse number="45">ನಾನು ಹೀಗೆ ಮನಸ್ಸಿನಲ್ಲಿ ಹೇಳಿಕೊಳ್ಳುತ್ತಿರುವಾಗಲೇ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನು ಹೊತ್ತುಕೊಂಡು ಬರುವುದನ್ನು ಕಂಡೆ. ಆಕೆ ಬುಗ್ಗೆಗೆ ಇಳಿದು ನೀರನ್ನು ತೆಗೆದುಕೊಂಡು ಬಂದಾಗ ನಾನು ಆಕೆಗೆ, ‘ನನಗೆ ಕುಡಿಯುವುದಕ್ಕೆ ನೀರನ್ನು ಕೊಡಬೇಕಮ್ಮಾ’ ಎಂದು ಹೇಳಿದೆ.</verse>
				<verse number="46">ಕೂಡಲೆ ಆಕೆ ಕೊಡವನ್ನು ಹೆಗಲಿನಿಂದ ಇಳಿಸಿ, ‘ಕುಡಿಯಪ್ಪಾ, ನಿನ್ನ ಒಂಟೆಗಳಿಗೂ ನೀರು ತಂದುಕೊಡುತ್ತೇನೆ,’ ಎಂದಳು. ನಾನು ಕುಡಿದ ಮೇಲೆ ಆಕೆ ಒಂಟೆಗಳಿಗೂ ನೀರನ್ನು ತಂದುಕೊಟ್ಟಳು.</verse>
				<verse number="47">ನೀನು ಯಾರ ಮಗಳೆಂದು ಕೇಳಿದ್ದಕ್ಕೆ, 'ನಾಹೋರನಿಗೆ ಮಿಲ್ಕಳಲ್ಲಿ ಹುಟ್ಟಿದ ಬೆತೂವೇಲನ ಮಗಳು’ ಎಂದಳು. ಅದನ್ನು ಕೇಳಿ ನಾನು ಆಕೆಗೆ ಮೂಗುತಿಯನ್ನೂ ಕೈಗಳಿಗೆ ಬಳೆಗಳನ್ನೂ ತೊಡಿಸಿ,</verse>
				<verse number="48">ನನ್ನೊಡೆಯ ಅಬ್ರಹಾಮನ ಸರ್ವೇಶ್ವರನಾದ ದೇವರಿಗೆ ತಲೆಬಾಗಿ ಆರಾಧಿಸಿದೆ. ಅವರು ನನ್ನೊಡೆಯ ಅಬ್ರಹಾಮನ ಮಗನಿಗೆ ಅವರ ತಮ್ಮನ ಮಗಳನ್ನೇ ಆರಿಸಿಕೊಳ್ಳುವಂತೆ ನನ್ನನ್ನು ನೆಟ್ಟಗೆ ಇಲ್ಲಿಗೆ ಕರೆದುಕೊಂಡು ಬಂದುದಕ್ಕಾಗಿ ಅವರನ್ನು ಕೊಂಡಾಡಿದೆ.</verse>
				<verse number="49">ಹೀಗಿರುವಲ್ಲಿ ನೀವು ನನ್ನೊಡೆಯನಿಗೆ ಪ್ರತಿ ಪ್ರೀತಿಯನ್ನೂ ಪ್ರಾಮಾಣಿಕತೆಯನ್ನೂ ತೋರಲು ಒಪ್ಪಿದರೆ ನನಗೆ ಹೇಳಿ; ಇಲ್ಲವಾದರೆ ಇಲ್ಲವೆನ್ನಿ; ಆಗ ಯಾವ ಕಡೆ ತಿರುಗಬೇಕೆಂದು ನನಗೆ ಗೊತ್ತಾಗುತ್ತದೆ,” ಎಂದು ವಿವರಿಸಿದನು.</verse>
				<verse number="50">ಅದಕ್ಕೆ ಲಾಬಾನನು ಮತ್ತು ಬೆತೂವೇಲನು, ” ಇದು ಸರ್ವೇಶ್ವರ ಸ್ವಾಮಿಯಿಂದಲೇ ಬಂದ ಸೂಚನೆ, ಇದಕ್ಕೆ ನಾವು ನಿನಗೆ 'ಹೌದು - ಇಲ್ಲ’ ಎಂದು ಹೇಳಲಾಗದು.</verse>
				<verse number="51">ರೆಬೆಕ್ಕಳನ್ನು ಇಗೋ ನಿನ್ನ ವಶಕ್ಕೆ ಒಪ್ಪಿಸುತ್ತಿದ್ದೇವೆ; ಕರೆದುಕೊಂಡು ಹೋಗಬಹುದು. ಸರ್ವೇಶ್ವರ ಹೇಳಿದಂತೆಯೇ ಆಕೆ ನಿನ್ನೊಡೆಯನ ಮಗನಿಗೆ ಪತ್ನಿ ಆಗಲಿ,” ಎಂದರು.</verse>
				<verse number="52">ಅಬ್ರಹಾಮನ ಸೇವಕನು ಅವರ ಮಾತನ್ನು ಕೇಳಿ ಸಾಷ್ಟಾಂಗವೆರಗಿ ಸರ್ವೇಶ್ವರ ಸ್ವಾಮಿಯನ್ನು ವಂದಿಸಿದನು.</verse>
				<verse number="53">ಬಳಿಕ ತಾನು ತಂದಿದ್ದ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ವಸ್ತ್ರಗಳನ್ನು ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಬೆಲೆಬಾಳುವ ಉಡುಗೊರೆಗಳನ್ನು ಕೊಟ್ಟನು.</verse>
				<verse number="54">ಅವನು ಮತ್ತು ಅವನ ಸಂಗಡ ಬಂದಿದ್ದವರು ಊಟ ಉಪಚಾರಗಳನ್ನು ಮುಗಿಸಿಕೊಂಡು ರಾತ್ರಿಯನ್ನು ಅಲ್ಲೇ ಕಳೆದರು. ಬೆಳಿಗ್ಗೆ ಎದ್ದು, “ನನ್ನೊಡೆಯನ ಬಳಿಗೆ ಹೋಗಲು ಅಪ್ಪಣೆಯಾಗಬೇಕು,” ಎಂದ ಆ ಸೇವಕ.</verse>
				<verse number="55">ಅದಕ್ಕೆ ರೆಬೆಕ್ಕಳ ಅಣ್ಣ ಹಾಗು ತಾಯಿ, “ಹುಡುಗಿ ಇನ್ನೂ ಎಂಟು ಹತ್ತು ದಿನವಾದರೂ ನಮ್ಮಲ್ಲಿರಲಿ; ಆಮೇಲೆ ಆಕೆ ಹೋಗಬಹುದು,” ಎಂದು ಹೇಳಿದರು.</verse>
				<verse number="56">ಅವನು ಅವರಿಗೆ, “ಸರ್ವೇಶ್ವರ ನನ್ನ ಪ್ರಯಾಣವನ್ನು ಸಫಲಮಾಡಿದ್ದಾರೆ. ನನ್ನನ್ನು ತಡೆಯಬೇಡಿ; ನನ್ನ ಒಡೆಯನ ಬಳಿಗೆ ಹೋಗಲು ಅಪ್ಪಣೆಯಾಗಬೇಕು,” ಎಂದನು.</verse>
				<verse number="57">ಅವರು, “ನಾವು ಹುಡುಗಿಯನ್ನು ಕರೆದು ಆಕೆಯ ಅಭಿಪ್ರಾಯವನ್ನು ತಿಳಿದುಕೊಳ್ಳುತ್ತೇವೆ,” ಎಂದು ಹೇಳಿ ರೆಬೆಕ್ಕಳನ್ನು ಕರೆದರು.</verse>
				<verse number="58">“ಈ ಮನುಷ್ಯನ ಜೊತೆಯಲ್ಲಿ ಹೋಗುತ್ತೀಯಾ?” ಎಂದು ಕೇಳಿದರು. ಆಕೆ, “ಹೋಗುತ್ತೇನೆ,” ಎಂದಳು.</verse>
				<verse number="59">ಆಗ ಅವರು ತಂಗಿ ರೆಬೆಕ್ಕಳನ್ನೂ ಆಕೆಯ ದಾದಿಯನ್ನೂ ಅಬ್ರಹಾಮನ ಸೇವಕನ ಮತ್ತು ಅವನ ಸಂಗಡಿಗರ ಜೊತೆಗೆ ಸಾಗಕಳುಹಿಸಿದರು, ಅಲ್ಲದೆ ರೆಬೆಕ್ಕಳನ್ನು ಹೀಗೆಂದು ಹರಸಿದರು:</verse>
				<verse number="60">“ಸಾವಿರ, ಹತ್ತು ಸಾವಿರ, ಸಂತತಿಯಾಗಲಿ, ಎಲೆ ತಂಗಿ ನಿನಗೆ; ವೈರಿಗಳ ನಗರಗಳು ಸ್ವಾಧೀನವಾಗಲಿ ನಿನ್ನ ಸಂತತಿಗೆ!”</verse>
				<verse number="61">ರೆಬೆಕ್ಕಳು ಮತ್ತು ಆಕೆಯ ದಾದಿಯರು ಒಂಟೆಗಳ ಮೇಲೆ ಅಬ್ರಹಾಮನ ಸೇವಕನನ್ನು ಹಿಂಬಾಲಿಸಿ ಹೋದರು. ಹೀಗೆ ಆ ಸೇವಕನು ರೆಬೆಕ್ಕಳನ್ನು ಕರೆದುಕೊಂಡು ಹೋದನು.</verse>
				<verse number="62">ಇತ್ತ ಇಸಾಕನು ‘ಲಹೈರೋಯಿ’ ಎಂಬಲ್ಲಿಗೆ ಹೋಗಿ ಬಂದು ಕಾನಾನ್ ನಾಡಿನ ದಕ್ಷಿಣ ಪ್ರಾಂತದಲ್ಲಿ ವಾಸಮಾಡುತ್ತಿದ್ದನು.</verse>
				<verse number="63">ಸಂಜೆ ವೇಳೆಯಲ್ಲಿ ಅವನು ವಿಶ್ರಾಂತಿಗಾಗಿ ತಿರುಗಾಡಲು ಹೋಗಿದ್ದನು. ಕಣ್ಣೆತ್ತಿ ನೋಡಿದಾಗ ಒಂಟೆಗಳು ಬರುತ್ತಿರುವುದು ಅವನಿಗೆ ಕಾಣಿಸಿತು.</verse>
				<verse number="64">ರೆಬೆಕ್ಕಳೂ ಕಣ್ಣೆತ್ತಿ ಇಸಾಕನನ್ನು ನೋಡಿ ಒಂಟೆಯಿಂದ ಕೆಳಗಿಳಿದಳು.</verse>
				<verse number="65">“ನಮ್ಮ ಕಡೆ ಹೊಲದಲ್ಲಿ ನಡೆದು ಬರುತ್ತಿರುವ ಆ ಮನುಷ್ಯ ಯಾರು?” ಎಂದು ಆ ಸೇವಕನನ್ನು ಕೇಳಿದಳು. “ಅವನೇ ನನ್ನೊಡೆಯ” ಎಂದು ಹೇಳಿದಾಗ ಆಕೆ ಮುಸಕುಹಾಕಿಕೊಂಡಳು.</verse>
				<verse number="66">ಆ ಸೇವಕನು ತಾನು ಮಾಡಿದ ಕಾರ್ಯಗಳನ್ನೆಲ್ಲ ಇಸಾಕನಿಗೆ ವರದಿ ಮಾಡಿದನು.</verse>
				<verse number="67">ಇಸಾಕನು ಆಕೆಯನ್ನು ತನ್ನ ತಾಯಿ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಹೀಗೆ ಅವನು ರೆಬೆಕ್ಕಳನ್ನು ವರಿಸಿದನು; ಆಕೆ ಅವನಿಗೆ ಪತ್ನಿಯಾದಳು. ಆಕೆಯ ಮೇಲಿನ ಪ್ರೀತಿ, ತನ್ನ ತಾಯಿ ಸಾರಳನ್ನು ಕಳೆದುಕೊಂಡಿದ್ದ ಅವನಿಗೆ ಸಾಂತ್ವನ ತಂದಿತು.</verse>
			</chapter>
			<chapter number="25">
				<verse number="1">ಅಬ್ರಹಾಮನು ಕೆಟೂರಳೆಂಬ ಇನ್ನೊಬ್ಬ ಹೆಂಡತಿಯನ್ನು ಮದುವೆ ಮಾಡಿಕೊಂಡನು.</verse>
				<verse number="2">ಆಕೆ ಅವನಿಗೆ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಇವರನ್ನು ಹೆತ್ತಳು.</verse>
				<verse number="3">ಯೊಕ್ಷಾನನು ಶೆಬಾ, ದೆದಾನ್ ಎಂಬವರನ್ನು ಪಡೆದನು. ಅಶ್ಯೂರ್ಯರು, ಲೆಟೂಶ್ಯರೂ ಲೆಯುಮ್ಯರು ದೆದಾನನಿಂದ ಹುಟ್ಟಿದರು.</verse>
				<verse number="4">ಗೇಫಾ, ಗೇಫೆರ್, ಹನೋಕ್ ಅಬೀದಾ, ಎಲ್ದಾಗ ಎಂಬವರು ಮಿದ್ಯಾನನಿಂದ ಹುಟ್ಟಿದರು. ಇವರೆಲ್ಲರು ಕೆಟೂರಳ ಸಂತತಿಯವರು.</verse>
				<verse number="5">ಅಬ್ರಹಾಮನು ತನಗಿದ್ದ ಆಸ್ತಿಪಾಸ್ತಿಯನ್ನೆಲ್ಲ ಇಸಾಕನಿಗೆ ಕೊಟ್ಟನು.</verse>
				<verse number="6">ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗಲೇ ಅವರನ್ನು ತನ್ನ ಮಗ ಇಸಾಕನ ಬಳಿಯಿಂದ ದೂರಕ್ಕೆ ಪೂರ್ವದಿಕ್ಕಿನಲ್ಲಿದ್ದ ಕೆದೆಮ್ ನಾಡಿಗೆ, ಕಳಿಸಿಬಿಟ್ಟನು.</verse>
				<verse number="7">ಅಬ್ರಹಾಮನು ನೂರೆಪ್ಪತ್ತೈದು ವರ್ಷ ಬದುಕಿದ್ದನು.</verse>
				<verse number="8">ಪೂರ್ಣ ಆಯುಷ್ಯವನ್ನು ಕಳೆದು, ಹಣ್ಣು ಹಣ್ಣು ಮುದುಕನಾಗಿ ಪ್ರಾಣಬಿಟ್ಟು ಅವನು ತನ್ನ ಪಿತೃಗಳ ಬಳಿಗೆ ಸೇರಿದನು.</verse>
				<verse number="9">ಅವನ ಮಕ್ಕಳಾದ ಇಸಾಕ್ - ಇಷ್ಮಾಯೇಲರು ಅವನನ್ನು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಹೊಲದಲ್ಲಿದ್ದ ಮಕ್ಪೇಲದ ಗವಿಯಲ್ಲಿ ಸಮಾಧಿಮಾಡಿದರು. ಅದು ಮಮ್ರೆಗೆ ಪೂರ್ವದಿಕ್ಕಿನಲ್ಲಿದೆ.</verse>
				<verse number="10">ಅಬ್ರಹಾಮನೇ ಹಿತ್ತಿಯರಿಂದ ಕೊಂಡುಕೊಂಡ ಹೊಲ ಅದು. ಅದರಲ್ಲೇ ಅವನಿಗೂ ಅವನ ಹೆಂಡತಿ ಸಾರಳಿಗೂ ಸಮಾಧಿ ಆಯಿತು.</verse>
				<verse number="11">ಅಬ್ರಹಾಮನು ಕಾಲವಾದ ಬಳಿಕ ಅವನ ಮಗ ಇಸಾಕನನ್ನು ದೇವರು ಆಶೀರ್ವದಿಸಿದರು. ಇಸಾಕನು ‘ಲಹೈರೋಯಿ’ ಎಂಬ ಬಾವಿಯ ಹತ್ತಿರ ವಾಸವಾಗಿದ್ದನು.</verse>
				<verse number="12">ಅಬ್ರಹಾಮನಿಗೆ ಸಾರಳ ದಾಸಿಯೂ ಈಜಿಪ್ಟಿನವಳೂ ಆದ ಹಾಗರಳಲ್ಲಿ ಹುಟ್ಟಿದ ಇಷ್ಮಾಯೇಲನ ವಂಶಾವಳಿ:</verse>
				<verse number="13">ಇಷ್ಮಾಯೇಲನ ಮಕ್ಕಳಿಗೂ ಅವರಿಂದ ಹುಟ್ಟಿದ ಕುಲಗಳಿಗೂ ಇಡಲಾಗಿದ್ದ ಹೆಸರುಗಳು ಇವು - ಮೊದಲು ಹುಟ್ಟಿದವನು ನೆಬಾಯೋತ್, ಆಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್,</verse>
				<verse number="14">ಮಿಬ್ಸಾಮ್, ಮಿಷ್ಮಾ, ದೂಮಾ, ಮಸ್ಸಾ,</verse>
				<verse number="15">ಹದದ್, ತೇಮಾ, ಯಟೂರ್, ನಾಫೀಷ್ ಹಾಗೂ ಕೇದ್ಮಾ.</verse>
				<verse number="16">ಇವರೇ ಆ ಹನ್ನೆರಡು ಕುಲದ ಮೂಲಪುರುಷರು. ಈ ಹೆಸರುಗಳನ್ನು ಅವರು ವಾಸಿಸಿದ್ದ ಊರುಗಳಿಗೂ ಪಾಳೆಯಗಳಿಗೂ ಇಡಲಾಗಿತ್ತು.</verse>
				<verse number="17">ಇಷ್ಮಾಯೇಲನು ನೂರಮೂವತ್ತೇಳು ವರ್ಷ ಬದುಕಿದ್ದನು. ಅನಂತರ ಸತ್ತು ತನ್ನ ಪಿತೃಗಳ ಬಳಿಗೆ ಸೇರಿದನು.</verse>
				<verse number="18">ಇಷ್ಮಾಯೇಲ್ಯರು ಹವೀಲ ಹಾಗು ಶೂರಿನ ಮಧ್ಯೆಯಿರುವ ಪ್ರದೇಶದಲ್ಲಿ ವಾಸಮಾಡಿದರು. ಶೂರ್ ಈಜಿಪ್ಟಿನ ಪೂರ್ವಕ್ಕೆ ಅಸ್ಸೀರಿಯಗೆ ಹೋಗುವ ಹಾದಿಯಲ್ಲಿದೆ. ಹೀಗೆ ಇಷ್ಮಾಯೇಲ್ಯರು ತಮ್ಮ ಸಂಬಂಧಿಕರಿಗೆ ಎದುರುಬದುರಿನಲ್ಲೇ ವಾಸಮಾಡಿದರು.</verse>
				<verse number="19">ಅಬ್ರಹಾಮನ ಮಗ ಇಸಾಕನ ವಂಶಾವಳಿ: ಅಬ್ರಹಾಮನು ಇಸಾಕನನ್ನು ಪಡೆದನು.</verse>
				<verse number="20">ಇಸಾಕನು ನಲವತ್ತು ವರ್ಷದವನಾಗಿದ್ದಾಗ ಅರಾಮ್ಯರಾದ ಬೆತುವೇಲನ ಮಗಳೂ ಲಾಬಾನನ ತಂಗಿಯೂ ಆಗಿದ್ದ ರೆಬೆಕ್ಕಳನ್ನು ಮೆಸಪೊಟೇಮಿಯಾ ದಿಂದ ಬರಮಾಡಿಸಿಕೊಂಡು ಮದುವೆಯಾದನು.</verse>
				<verse number="21">ರೆಬೆಕ್ಕಳಿಗೆ ಮಕ್ಕಳಾಗಲಿಲ್ಲ. ಸರ್ವೇಶ್ವರ ಅವನ ವಿಜ್ಞಾಪನೆಯನ್ನು ಆಲಿಸಿದರು. ರೆಬೆಕ್ಕಳು ಗರ್ಭವತಿಯಾದಳು.</verse>
				<verse number="22">ಆಕೆಯ ಗರ್ಭದಲ್ಲಿದ್ದ ಅವಳಿ ಮಕ್ಕಳು ಒಂದನ್ನೊಂದು ಒತ್ತರಿಸಿದಾಗ ಆಕೆ, “ನನಗೇತಕ್ಕೆ ಹೀಗಾಗುತ್ತಿದೆ?” ಎಂದುಕೊಂಡು ಸರ್ವೇಶ್ವರ ಸ್ವಾಮಿಯನ್ನು ವಿಚಾರಿಸಲು ಹೋದಳು.</verse>
				<verse number="23">ಸರ್ವೇಶ್ವರ ಆಕೆಗೆ ಇಂತೆಂದರು: ನಿನ್ನ ಉದರದೊಳಿವೆ ಜನಾಂಗಗಳೆರಡು ಹುಟ್ಟಿನಿಂದ ವೈರಿಗಳಾ ರಾಷ್ಟ್ರಗಳೆರಡು ಬಲಿಷ್ಠವಿರುವುದು ಒಂದು ಮತ್ತೊಂದಕೆ ಜ್ಯೇಷ್ಠನೇ ದಾಸನಾಗುವನು ಕನಿಷ್ಠನಿಗೆ.</verse>
				<verse number="24">ದಿನ ತುಂಬಿದಾಗ ರೆಬೆಕ್ಕಳು ಅವಳಿ ಮಕ್ಕಳನ್ನು ಹೆತ್ತಳು.</verse>
				<verse number="25">ಮೊದಲು ಹುಟ್ಟಿದ ಮಗು ಕೆಂಚಗೂ ಮೈಯೆಲ್ಲ ರೋಮಮಯವಾಗೂ ಇತ್ತು. ಎಂತಲೇ ಅದಕ್ಕೆ ಏಸಾವ ಎಂದು ಹೆಸರಿಟ್ಟರು.</verse>
				<verse number="26">ಎರಡನೆಯ ಮಗು ಏಸಾವನ ಹಿಮ್ಮಡಿಯನ್ನು ಹಿಡಿದುಕೊಂಡು ಹುಟ್ಟಿದ್ದರಿಂದ ಅದಕ್ಕೆ ಯಕೋಬ ಎಂದು ಹೆಸರಿಟ್ಟರು. ಇವರು ಹುಟ್ಟಿದಾಗ ಇಸಾಕನಿಗೆ ಅರವತ್ತು ವರ್ಷವಾಗಿತ್ತು.</verse>
				<verse number="27">ಆ ಹುಡುಗರಿಬ್ಬರು ಬೆಳೆದರು. ಏಸಾವನು ಚೂಟಿಯಾದ ಬೇಟೆಗಾರನಾದ, ವನವಾಸಿಯಾದ, ಯಕೋಬನು ಸಾಧುಮನುಷ್ಯ, ಅವನದು ಗುಡಾರಗಳಲ್ಲಿ ವಾಸ,</verse>
				<verse number="28">ಇಸಾಕನಿಗೆ ಬೇಟೆಯ ಮಾಂಸ ಇಷ್ಟ; ಎಂದೇ ಏಸಾವನ ಮೇಲೆ ಹೆಚ್ಚು ಪ್ರೀತಿ. ರೆಬೆಕ್ಕಳಿಗಾದರೋ ಯಕೋಬನ ಮೇಲೆ ಹೆಚ್ಚು ಪ್ರೀತಿ.</verse>
				<verse number="29">ಒಮ್ಮೆ ಯಕೋಬನು ಅಡಿಗೆ ಮಾಡುತ್ತಿದ್ದ. ಏಸಾವನು ಕಾಡಿನಿಂದ ದಣಿದು ಬಂದು,</verse>
				<verse number="30">‘ನಾನು ಬಹಳವಾಗಿ ದಣಿದು ಬಂದಿದ್ದೇನೆ. ಆ ಕೆಂಪು ಪದಾರ್ಥವನ್ನು ತಿನ್ನಲು ಕೊಡು’, ಎಂದು ಕೇಳಿದ. (ಈ ಕಾರಣದಿಂದಲೇ ಏಸಾವನಿಗೆ ಎದೋಮ್ ಎಂದು ಹೆಸರಾಯಿತು.)</verse>
				<verse number="31">ಅದಕ್ಕೆ ಯಕೋಬ, ‘ನಿನ್ನದಾಗಿರುವ ಜ್ಯೇಷ್ಠಪುತ್ರನ ಹಕ್ಕನ್ನು ನನಗೆ ಮೊದಲು ಮಾರಿಬಿಡು,’ ಎಂದು ಹೇಳಿದ.</verse>
				<verse number="32">ಏಸಾವನು, ‘ಆಗಲಿ, ಮಾರುತ್ತೇನೆ, ಸಾಯುತ್ತಿರುವ ನನಗೆ ಜ್ಯೇಷ್ಠತನದಿಂದ ಪ್ರಯೋನಜವೇನು? ಎಂದ.</verse>
				<verse number="33">ಯಕೋಬನು ‘ಮಾರಿರುವುದಾಗಿ ನನಗೆ ಪ್ರಮಾಣ ಮಾಡು’, ಎಂದಾಗ ಏಸಾವನು ಪ್ರಮಾಣಮಾಡಿ ತನ್ನ ಜ್ಯೇಷ್ಠತನದ ಹಕ್ಕನ್ನು ಮಾರಿಬಿಟ್ಟ.</verse>
				<verse number="34">ಆಗ ಯಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯನ್ನೂ ಕೊಟ್ಟ. ಏಸಾವನು ತಿಂದು, ಕುಡಿದು, ಎದ್ದು ಹೋದ. ಜ್ಯೇಷ್ಠತನದ ಹಕ್ಕುಬಾಧ್ಯತೆಗೆ ಏಸಾವನು ಕೊಟ್ಟ ಮರ್ಯಾದೆ ಇಷ್ಟೇ!</verse>
			</chapter>
			<chapter number="26">
				<verse number="1">ಹಿಂದೆ ಅಬ್ರಹಾಮನ ಕಾಲದಲ್ಲಿ ಬಂದಿದ್ದ ಬರಗಾಲವು ಮತ್ತೊಮ್ಮೆ ಕಾನಾನ್ ನಾಡಿಗೆ ಬಂದಿತು. ಇಸಾಕನು ಫಿಲಿಷ್ಟಿಯರ ಅರಸ ಅಬೀಮೆಲೆಕನನ್ನು ಕಾಣಲು ಗೆರಾರಿಗೆ ಹೋದನು.</verse>
				<verse number="2">ಅಲ್ಲಿ ಸರ್ವೇಶ್ವರ ಸ್ವಾಮಿ ಇಸಾಕನಿಗೆ ದರ್ಶನ ಕೊಟ್ಟು ಇಂತೆಂದರು: “ನೀನು ಈಜಿಪ್ಟಿಗೆ ಹೋಗಬೇಡ;</verse>
				<verse number="3">ನಾನು ಹೇಳುವ ನಾಡಿನಲ್ಲಿ ಇದ್ದು ಪ್ರವಾಸ ಮಾಡುತ್ತಿರು. ನಾನು ನಿನ್ನ ಸಂಗಡವಿದ್ದು ನೀನು ಏಳಿಗೆಯಾಗುವಂತೆ ಮಾಡುತ್ತೇನೆ; ಈ ನಾಡೆಲ್ಲವನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.</verse>
				<verse number="4">ನಿನ್ನ ತಂದೆ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿದನು; ನನ್ನ ಆಜ್ಞಾವಿಧಿಗಳನ್ನೂ ನೇಮನಿಯಮಗಳನ್ನೂ ಕೈಗೊಂಡು ನಡೆದನು. ಆದುದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸುತ್ತೇನೆ.</verse>
				<verse number="5">ನಿನ್ನ ಸಂತತಿಯನ್ನು ಆಕಾಶದಲ್ಲಿರುವ ನಕ್ಷತ್ರಗಳಂತೆ ಅಸಂಖ್ಯಾತವಾಗಿಸುತ್ತೇನೆ; ಅವರಿಗೆ ಈ ನಾಡೆಲ್ಲವನ್ನು ಕೊಡುತ್ತೇನೆ. ಜಗದ ಜನಾಂಗಗಳಿಗೆಲ್ಲ ನಿನ್ನ ಸಂತತಿಯ ಮುಖಾಂತರ ಆಶೀರ್ವಾದ ದೊರಕುವುದು.”</verse>
				<verse number="6">ಅಂತೆಯೇ ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು.</verse>
				<verse number="7">ಅಲ್ಲಿಯ ಜನರು ಅವನ ಹೆಂಡತಿಯ ವಿಷಯವಾಗಿ ವಿಚಾರಿಸಿದರು. “ಅವಳು ನನ್ನ ತಂಗಿ”, ಎಂದು ಇಸಾಕನು ಹೇಳಿದನು. ರೆಬೆಕ್ಕಳು ಬಲು ಚೆಲುವೆಯಾಗಿದ್ದರಿಂದ ಆಕೆಯ ನಿಮಿತ್ತ ತನ್ನನ್ನು ಕೊಂದಾರು ಎಂದು ಹೆದರಿ ಹಾಗೆ ಹೇಳಿದನು.</verse>
				<verse number="8">ಅವನು, ಆ ಸ್ಥಳದಲ್ಲಿ ಬಹಳ ದಿವಸ ತಂಗಿದ್ದನು. ಒಂದು ದಿನ ಫಿಲಿಷ್ಟಿಯ ಅರಸನಾದ ಅಬೀಮೆಲೆಕನು ಕಿಟಕಿಯಿಂದ ನೋಡಿದಾಗ ಇಸಾಕನು ತನ್ನ ಹೆಂಡತಿ ರೆಬೆಕ್ಕಳ ಸಂಗಡ ಸರಸವಾಡುವುದನ್ನು ಕಂಡನು.</verse>
				<verse number="9">ಕೂಡಲೆ ಅವನು ಇಸಾಕನನ್ನು ಕರೆಯಿಸಿ, “ಖಂಡಿತವಾಗಿ ಈಕೆ ನಿನ್ನ ಹೆಂಡತಿ; ಮತ್ತೆ ಆಕೆ ನಿನ್ನ ತಂಗಿ ಎಂದು ಏಕೆ ಹೇಳಿದೆ?” ಎಂದು ಕೇಳಿದನು. ಇಸಾಕನು, “ಈಕೆಯ ನಿಮಿತ್ತ ಜನರು ನನ್ನನ್ನು ಕೊಂದಾರೆಂದು ಹಾಗೆ ಹೇಳಿದೆ,” ಎಂದನು.</verse>
				<verse number="10">ಅದಕ್ಕೆ ಅಬೀಮೆಲೆಕನು, “ನೀನು ನಮಗೆ ಹೀಗೆ ಮಾಡಬಹುದೆ? ನಮ್ಮಲ್ಲಿ ಯಾರಾದರೊಬ್ಬನು ನಿನ್ನ ಹೆಂಡತಿಯನ್ನು ಕೂಡಿರಬಹುದಿತ್ತಲ್ಲವೆ? ಆಗ ನಿನ್ನಿಂದ ನನಗೆ ದೋಷ ಪ್ರಾಪ್ತವಾಗುತ್ತಿತ್ತಲ್ಲವೆ?” ಎಂದು ಹೇಳಿದನು.</verse>
				<verse number="11">ಬಳಿಕ ತನ್ನ ಪ್ರಜೆಗಳಿಗೆ ಈ ಆಜ್ಞೆಯನ್ನು ಹೊರಡಿಸಿದನು. “ಈ ಮನುಷ್ಯನಿಗಾಗಲಿ ಇವನ ಹೆಂಡತಿಗಾಗಲಿ ಕೇಡುಮಾಡುವವನಿಗೆ ಮರಣದಂಡನೆ ತಪ್ಪದು.”</verse>
				<verse number="12">ಇಸಾಕನು ಆ ನಾಡಿನಲ್ಲಿ ವ್ಯವಸಾಯ ಮಾಡಿ ಅದೇ ವರ್ಷದಲ್ಲಿ ನೂರ್ಮಡಿ ಬೆಳೆ ಎತ್ತಿದನು. ಸರ್ವೇಶ್ವರ ಸ್ವಾಮಿಯ ಆಶೀರ್ವಾದ ಅವನ ಮೇಲಿತ್ತು.</verse>
				<verse number="13">ಅವನು ದಿನದಿಂದ ದಿನಕ್ಕೆ ಹೆಚ್ಚು ಆಸ್ತಿವಂತನಾಗಿ ದೊಡ್ಡ ಧನವಂತನಾದನು.</verse>
				<verse number="14">ಅವನಿಗೆ ದನಕುರಿಗಳೂ ಆಳುಕಾಳುಗಳೂ ಹೇರಳವಾಗಿದ್ದುದನ್ನು ನೋಡಿ ಫಿಲಿಷ್ಟಿಯರು ಹೊಟ್ಟೆಕಿಚ್ಚುಪಟ್ಟರು.</verse>
				<verse number="15">ಅವನ ತಂದೆ ಅಬ್ರಹಾಮನ ಕಾಲದಲ್ಲೇ ತೋಡಲಾಗಿದ್ದ ಬಾವಿಯನ್ನು ಮಣ್ಣುಹಾಕಿ ಮುಚ್ಚಿಬಿಟ್ಟರು.</verse>
				<verse number="16">ಹೀಗಿರಲಾಗಿ ಅಬೀಮೆಲೆಕನು ಇಸಾಕನಿಗೆ, “ನೀನು ನಮಗಿಂತ ಅಧಿಕ ಬಲಿಷ್ಠನಾಗಿಬಿಟ್ಟೆ; ಆದುದರಿಂದ ನಮ್ಮನ್ನು ಬಿಟ್ಟು ಹೊರಟುಹೋಗಬೇಕು” ಎಂದು ಹೇಳಿದನು.</verse>
				<verse number="17">ಅಂತೆಯೇ ಇಸಾಕನು ಅಲ್ಲಿಂದ ಹೊರಟು ಗೆರಾರ್ ತಗ್ಗಿನ ಬಯಲಿನಲ್ಲಿ ಗುಡಾರ ಹಾಕಿಕೊಂಡು ವಾಸಮಾಡಿದನು.</verse>
				<verse number="18">ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತಮೇಲೆ ಫಿಲಿಷ್ಟಿಯರು ಮುಚ್ಚಿಹಾಕಿದ್ದರಿಂದ ಇಸಾಕನು ಅವುಗಳನ್ನು ಮರಳಿ ತೆಗೆಸಿ ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.</verse>
				<verse number="19">ಇಸಾಕನ ಕೆಲಸಗಾರರು ಆ ತಗ್ಗಿನಲ್ಲಿ ಅಗೆಯುತ್ತಿದ್ಪಾಗ ಅವರಿಗೆ ಸೆಲೆ ನೀರಿನ ಬಾವಿಯೊಂದು ಸಿಕ್ಕಿತು.</verse>
				<verse number="20">ಗೆರಾರಿನ ದನಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನಕಾಯುವವರ ಸಂಗಡ ಜಗಳವಾಡಿದರು. ಆದುದರಿಂದ ಇಸಾಕನು ಆ ಬಾವಿಗೆ “ಏಸೆಕ್\ ಎಂದು ಹೆಸರಿಟ್ಟರು.</verse>
				<verse number="21">ತರುವಾಯ ಅವನ ಜನರು ಬೇರೊಂದು ಬಾವಿಯನ್ನು ತೋಡಿದರು. ಆ ನಾಡಿಗರು ಅದಕ್ಕಾಗಿಯೂ ಜಗಳವಾಡಿದ್ದರಿಂದ ಅದಕ್ಕೆ ‘ಸಿಟ್ನಾ’ ಎಂದು ಹೆಸರಿಟ್ಟನು.</verse>
				<verse number="22">ಅವನು ಅಲ್ಲಿಂದ ಮುಂದಕ್ಕೆ ತೆರಳಿ ಮತ್ತೊಂದು ಬಾವಿಯನ್ನು ಅಗೆಸಿದನು. ಅದರ ಬಗ್ಗೆ ಯಾರೂ ಜಗಳಕ್ಕೆ ಬರಲಿಲ್ಲ. ಈ ಕಾರಣ ಅವನು, “ಸರ್ವೇಶ್ವರ ನಮಗೀಗ ಸ್ಥಳಾವಕಾಶ ಮಾಡಿಕೊಟ್ಟಿದ್ದಾರೆ; ನಾವು ಅಭಿವೃದ್ಧಿಯಾಗುತ್ತೇವೆ,” ಎಂದು ಹೇಳಿ ಆ ಬಾವಿಗೆ ‘ರೆಹೋಬೋತ್’ ಎಂದು ಹೆಸರಿಟ್ಟನು.</verse>
				<verse number="23">ಇಸಾಕನು ಅಲ್ಲಿಂದ ಹೊರಟು ಬೇರ್ಷೆಬಕ್ಕೆ ಬಂದನು.</verse>
				<verse number="24">ಆ ರಾತ್ರಿ ಸರ್ವೇಶ್ವರ ಅವನಿಗೆ ದರ್ಶನವಿತ್ತು, “ನಿನ್ನ ತಂದೆ ಅಬ್ರಹಾಮನ ದೇವರು ನಾನೇ ಅಂಜಬೇಡ, ನಿನ್ನ ಸಂಗಡ ನಾನಿರುವೆ. ಆ ನನ್ನ ದಾಸ ಅಬ್ರಹಾಮನ ನಿಮಿತ್ತ ನಿನ್ನ ಹರಸಿ ನಾ ಹೆಚ್ಚಿಸುವೆ ನಿನ್ನ ಸಂತಾನವ” ಎಂದರು.</verse>
				<verse number="25">ಇಸಾಕನು ಒಂದು ಬಲಿಪೀಠವನ್ನು ಕಟ್ಟಿಸಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆ ಮಾಡಿ ಆರಾಧಿಸಿ, ಅಲ್ಲಿ ಗುಡಾರ ಹಾಕಿಸಿಕೊಂಡನು. ಅವನ ಕೆಲಸಗಾರರು ಅಲ್ಲಿಯೂ ಒಂದು ಬಾವಿಯನ್ನು ತೋಡಿದರು.</verse>
				<verse number="26">ಇದಾದ ಬಳಿಕ ಅಬೀಮೆಲೆಕನು ತನ್ನ ಮಂತ್ರಿ ಅಹುಜ್ಜತನನ್ನೂ ಸೇನಾಪತಿ ಫೀಕೋಲನನ್ನೂ ಕರೆದುಕೊಂಡು ಗೆರಾರಿನಿಂದ ಇಸಾಕನ ಬಳಿಗೆ ಬಂದನು.</verse>
				<verse number="27">ಇಸಾಕನು, “ನೀವು ನನ್ನ ಮೇಲೆ ಹಗೆತನ ತಾಳಿ ನಿಮ್ಮ ಬಳಿಯಿಂದ ಕಳುಹಿಸಿಬಿಟ್ಟಿರಲ್ಲವೆ? ಈಗ ನನ್ನ ಬಳಿಗೆ ಏಕೆ ಬಂದಿರಿ?” ಎಂದು ಕೇಳಿದನು.</verse>
				<verse number="28">ಅದಕ್ಕೆ ಅವರು, “ಸರ್ವೇಶ್ವರ ನಿನ್ನ ಸಂಗಡ ಇದ್ದಾರೆಂಬುದು ನಮಗೆ ಚೆನ್ನಾಗಿ ಕಂಡುಬಂದಿದೆ. ನೀನೂ ನಾವೂ ಒಬ್ಬರಿಗೊಬ್ಬರು ಪ್ರಮಾಣಪೂರ್ವಕವಾದ ಒಪ್ಪಂದ ಮಾಡಿಕೊಳ್ಳಬೇಕೆಂದು ತೀರ್ಮಾನಿಸಿದ್ದೇವೆ.</verse>
				<verse number="29">ನಾವು ನಿನಗೆ ಯಾವ ಕೇಡನ್ನು ಮಾಡದೆ ಒಳ್ಳೆಯದನ್ನೇ ಮಾಡಿ ಸಮಾಧಾನದಿಂದ ಕಳುಹಿಸಿಕೊಟ್ಟಿಲ್ಲವೆ? ಅದರಂತೆಯೆ ಸರ್ವೇಶ್ವರ ಸ್ವಾಮಿಯಿಂದ ಆಶೀರ್ವಾದ ಪಡೆದ ನೀನು ನಮಗೆ ಕೇಡುಮಾಡುವುದಿಲ್ಲವೆಂದು ಪ್ರಮಾಣ ಮಾಡಬೇಕು,” ಎಂದು ಹೇಳಿದರು.</verse>
				<verse number="30">ಆಗ ಇಸಾಕನು ಅವರಿಗೆ ಔತಣವನ್ನು ಏರ್ಪಡಿಸಿದನು; ಅವರೆಲ್ಲರು ತಿಂದು ಕುಡಿದರು.</verse>
				<verse number="31">ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣ ಮಾಡಿಕೊಂಡರು. ಇಸಾಕನು ಅವರನ್ನು ಬೀಳ್ಕೊಡಲು ಅವರು ಸಮಾಧಾನದಿಂದ ಹೊರಟುಹೋದರು.</verse>
				<verse number="32">ಅದೇ ದಿನ ಇಸಾಕನ ಕೆಲಸಗಾರರು ತಾವು ತೋಡಿದ್ದ ಬಾವಿಯ ಸಮಾಚಾರದೊಂದಿಗೆ ಬಂದು, “ನಮಗೆ ನೀರು ಸಿಕ್ಕಿತು,” ಎಂದು ವರದಿಮಾಡಿದರು.</verse>
				<verse number="33">ಇಸಾಕನು ಆ ಬಾವಿಗೆ, ‘ಷೆಬಾ’ ಎಂದು ಹೆಸರಿಟ್ಟನು. ಈ ಕಾರಣ ಅಲ್ಲಿರುವ ಊರಿಗೆ ‘ಬೇರ್ಷೆಬ’ ಎಂದು ಹೆಸರಾಯಿತು.</verse>
				<verse number="34">ಏಸಾವನು ನಲವತ್ತು ವರ್ಷದವನಾದಾಗ ಹಿತ್ತಿಯನಾದ ಬೇರಿಯನ ಮಗಳು ಯೆಹುದೀತಳನ್ನು ಮತ್ತು ಹಿತ್ತಿಯನಾದ ಎಲೋನನ ಮಗಳು ಬಾಸೆಮತಳನ್ನು ಮದುವೆಮಾಡಿಕೊಂಡನು.</verse>
				<verse number="35">ಈ ಪತ್ನಿಗಳ ನಿಮಿತ್ತ ಇಸಾಕನು ಮತ್ತು ರೆಬೆಕ್ಕಳು ದುಃಖಪಡಬೇಕಾಯಿತು.</verse>
			</chapter>
			<chapter number="27">
				<verse number="1">ಇಸಾಕನಿಗೆ ಮುಪ್ಪಿನಿಂದ ಕಣ್ಣು ಕಾಣಲಾರದಷ್ಟು ಮಬ್ಬಾಯಿತು. ಅವನು ತನ್ನ ಹಿರಿಯ ಮಗ ಏಸಾವನನ್ನು ಕರೆದು, \ಮಗನೇ,” ಎನ್ನಲು ಏಸಾವನು, “ಇಗೋ, ಇಲ್ಲೇ ಇದ್ದೇನೆ,” ಎಂದನು.</verse>
				<verse number="2">ಇಸಾಕನು ಅವನಿಗೆ, “ನೋಡು, ನಾನು ಮುದುಕನಾಗಿಬಿಟ್ಟೆ. ಯಾವಾಗ ಸಾಯುತ್ತೇನೋ ಗೊತ್ತಿಲ್ಲ;</verse>
				<verse number="3">ಆದುದರಿಂದ ನಿನ್ನ ಆಯುಧಗಳನ್ನೂ ಬಿಲ್ಲುಬತ್ತಳಿಕೆಗಳನ್ನೂ ತೆಗೆದುಕೊಂಡು ಕಾಡಿಗೆ ಹೋಗು; ಬೇಟೆಯಾಡಿ ಬೇಟೆಯ ಮಾಂಸವನ್ನು ತೆಗೆದುಕೊಂಡು ಬಾ;</verse>
				<verse number="4">ಅದರಿಂದ ನನಗಿಷ್ಟವಾಗಿರುವ ಸವಿಯೂಟವನ್ನೂ ಅಣಿಮಾಡಿ ಬಡಿಸು. ಸಾವು ಬರುವುದಕ್ಕೆ ಮುಂಚೆ ನಾನು ನಿನ್ನನ್ನು ಮನಸಾರೆ ಆಶೀರ್ವದಿಸುತ್ತೇನೆ,” ಎಂದು ಹೇಳಿದನು.</verse>
				<verse number="5">ಇಸಾಕನು ತನ್ನ ಮಗ ಏಸಾವನಿಗೆ ಹೇಳಿದ ಮಾತು ರೆಬೆಕ್ಕಳ ಕಿವಿಗೆ ಬಿದ್ದಿತು. ಏಸಾವನು ಬೇಟೆಯಾಡಲು ಕಾಡಿಗೆ ಹೋಗಿದ್ದಾಗ,</verse>
				<verse number="6">ಆಕೆ ತನ್ನ ಮಗ ಯಕೋಬನಿಗೆ, “ನಿನ್ನ ತಂದೆ ನಿನ್ನಣ್ಣ ಏಸಾವನ ಸಂಗಡ ಮಾತನಾಡುತ್ತಾ,</verse>
				<verse number="7">ನೀನು ಹೋಗಿ ಬೇಟೆಯಾಡಿ ಬೇಟೆಯ ಮಾಂಸವನ್ನು ತೆಗೆದುಕೊಂಡು ಬಾ, ಅದರಿಂದ ನನಗೆ ಸವಿ ಊಟವನ್ನು ಅಣಿಮಾಡಿ ಬಡಿಸು; ಸಾವು ಬರುವುದಕ್ಕೆ ಮುಂಚೆ ನಾನು ನಿನ್ನನ್ನು ಸರ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಮನಸಾರೆ ಆಶೀರ್ವದಿಸುತ್ತೇನೆ,’ ಎಂದು ಹೇಳಿದ್ದನ್ನು ಕೇಳಿದ್ದೇನೆ.</verse>
				<verse number="8">ಆದುದರಿಂದ ಮಗನೇ, ನೀನು ನನ್ನ ಮಾತಿಗೆ ಕಿವಿಗೊಟ್ಟು ನಾನು ಹೇಳುವಂತೆ ಮಾಡು:</verse>
				<verse number="9">ಮೇಕೆ ಮಂದೆಯ ಬಳಿಗೆ ಹೋಗಿ ಎರಡು ಒಳ್ಳೆಯ ಮೇಕೆಮರಿಗಳನ್ನು ಬೇಗನೆ ತೆಗೆದುಕೊಂಡು ಬಾ; ಅವುಗಳಿಂದ ನಿನ್ನ ತಂದೆಗೆ ಇಷ್ಟವಾಗಿರುವ ಸವಿಯೂಟವನ್ನು ನಾನೇ ಅಣಿಮಾಡುತ್ತೇನೆ.</verse>
				<verse number="10">ನೀನು ಅದನ್ನು ಅವರ ಬಳಿಗೆ ತೆಗೆದುಕೊಂಡು ಹೋಗಿ ಬಡಿಸಬೇಕು; ಹಾಗೆ ಮಾಡಿದರೆ ಅವರು ಸಾಯುವುದಕ್ಕೆ ಮುಂಚೆ ನಿನ್ನನ್ನೇ ಮನಸಾರೆ ಆಶೀರ್ವದಿಸುವರು,” ಎಂದಳು.</verse>
				<verse number="11">ಅದಕ್ಕೆ ಯಕೋಬನು, “ನನ್ನ ಅಣ್ಣನ ಮೈ ತುಂಬ ರೋಮಗಳಿವೆ. ನನ್ನ ಮೈ ಆದರೋ ನುಣ್ಣಗಿದೆ;</verse>
				<verse number="12">ಒಂದು ವೇಳೆ ತಂದೆ ನನ್ನನ್ನು ಮುಟ್ಟಿನೋಡಿಯಾರು; ನಾನು ಅವರಿಗೆ ವಂಚಕನಾಗಿ ತೋರಿಬಂದರೆ ಆಶೀರ್ವಾದಕ್ಕೆ ಬದಲಾಗಿ ಶಾಪ ಬರಮಾಡಿಕೊಳ್ಳುತ್ತೇನೆ,” ಎಂದನು.</verse>
				<verse number="13">ಆಗ ಅವನ ತಾಯಿ, “ಮಗನೇ, ಅವರು ನಿನಗೆ ಶಾಪ ಕೊಟ್ಟರೆ ಆ ಶಾಪ ನನಗಿರಲಿ; ನೀನು ನನ್ನ ಮಾತನ್ನು ಕೇಳಿ ಆ ಮರಿಗಳನ್ನು ತೆಗೆದುಕೊಂಡು ಬಾ,” ಎಂದಳು.</verse>
				<verse number="14">ಅವನು ಹೋಗಿ ಅವುಗಳನ್ನು ತಂದು ತಾಯಿಗೆ ಕೊಟ್ಟನು. ರೆಬೆಕ್ಕಳು ಅವನ ತಂದೆಗೆ ಇಷ್ಟವಾದ ಸವಿ ಊಟವನ್ನು ಸಿದ್ಧಪಡಿಸಿದಳು.</verse>
				<verse number="15">ತನ್ನ ಹಿರಿಯ ಮಗ ಏಸಾವನ ಬಟ್ಟೆಗಳಲ್ಲಿ ಶ್ರೇಷ್ಠವಾದವು ಮನೆಯಲ್ಲಿ ಆಕೆಯ ವಶದಲ್ಲಿದ್ದವು. ಅವುಗಳನ್ನು ತೆಗೆದು ಕಿರಿಯ ಮಗ ಯಕೋಬನಿಗೆ ತೊಡಿಸಿದಳು</verse>
				<verse number="16">ಮೇಕೆಮರಿಗಳ ಚರ್ಮವನ್ನು ಅವನ ಕೈಗಳಿಗೂ ನುಣುಪಾದ ಕೊರಳಿಗೂ ಸುತ್ತಿದಳು.</verse>
				<verse number="17">ತಾನು ಸಿದ್ಧಮಾಡಿದ್ದ ಸವಿಯೂಟವನ್ನೂ ಸುಟ್ಟಿದ್ದ ರೊಟ್ಟಿಯನ್ನೂ ತನ್ನ ಮಗ ಯಕೋಬನ ಕೈಗೆ ಕೊಟ್ಟಳು.</verse>
				<verse number="18">ಯಕೋಬನು ತಂದೆಯ ಬಳಿಗೆ ಹೋಗಿ, “ಅಪ್ಪಾ” ಎಂದು ಕರೆದನು. ತಂದೆಯು, “ಏನು ಮಗನೇ, ನೀನು ಯಾವ ಮಗನು?” ಎಂದು ಕೇಳಿದನು.</verse>
				<verse number="19">ಯಕೋಬನು, “ನಾನೇ ನಿಮ್ಮ ಹಿರಿಯ ಮಗ ಏಸಾವನು; ನಿಮ್ಮ ಅಪ್ಪಣೆಯಂತೆ ಮಾಡಿಕೊಂಡು ಬಂದಿದ್ದೇನೆ. ಎದ್ದು ಕುಳಿತುಕೊಂಡು ನಾನು ತಂದಿರುವ ಬೇಟೆಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸಿ,” ಎಂದು ಹೇಳಿದನು.</verse>
				<verse number="20">ಇಸಾಕನು, “ಏನು ಮಗನೇ, ಇಷ್ಟು ಬೇಗನೆ ಬೇಟೆ ಹೇಗೆ ಸಿಕ್ಕಿತು?” ಎಂದು ಕೇಳಿದನು. ಯಕೋಬನು, “ನಿಮ್ಮ ದೇವರಾದ ಸರ್ವೇಶ್ವರ ಅದನ್ನು ನನ್ನೆದುರಿಗೆ ಬರಮಾಡಿದರು,” ಎಂದನು.</verse>
				<verse number="21">ಆಗ ಇಸಾಕನು ಅವನಿಗೆ, “ಮಗನೇ, ಹತ್ತಿರಕ್ಕೆ ಬಾ; ನೀನು ನನ್ನ ಮಗನೋ ಅಲ್ಲವೋ, ಎಂದು ಮುಟ್ಟಿ ತಿಳಿದುಕೊಳ್ಳಬೇಕು,” ಎಂದನು.</verse>
				<verse number="22">ಯಕೋಬನು ಹತ್ತಿರಕ್ಕೆ ಬಂದಾಗ ತಂದೆ ಇಸಾಕನು ಅವನನ್ನು ಮುಟ್ಟಿ ನೋಡಿ, “ಸ್ವರವೇನೋ ಯಕೋಬನ ಸ್ವರ; ಆದರೆ ಕೈ ಏಸಾವನ ಕೈ,” ಎಂದುಕೊಂಡನು.</verse>
				<verse number="23">ಯಕೋಬನ ಕೈಗಳು ಅವನ ಅಣ್ಣನ ಕೈಗಳಂತೆ ರೋಮಮಯವಾಗಿ ಇದ್ದುದರಿಂದ ಇಸಾಕನು ಅವನ ಗುರುತನ್ನು ತಿಳಿಯಲಾರದೆ ಅವನನ್ನು ಆಶೀರ್ವದಿಸಿದನು.</verse>
				<verse number="24">ಆದರೂ ಮರಳಿ, “ನೀನು ನಿಶ್ಚಯವಾಗಿ ನನ್ನ ಮಗ ಏಸಾವನೋ” ಎಂದು ಕೇಳಿದನು. ಯಕೋಬನು “ಹೌದು,” ಎಂದು ಉತ್ತರಕೊಟ್ಟನು.</verse>
				<verse number="25">ಆಗ ಇಸಾಕನು, “ಊಟಮಾಡಲು ಆ ಬೇಟೆಮಾಂಸವನ್ನು ತಂದು ಬಡಿಸು, ಆಮೇಲೆ ನಿನ್ನನ್ನು ಆಶೀರ್ವದಿಸುತ್ತೇನೆ,” ಎಂದನು. ಅಂತೆಯೇ ಯಕೋಬನು ಹತ್ತಿರಕ್ಕೆ ತಂದು ಬಡಿಸಿದಾಗ ಇಸಾಕನು ಊಟಮಾಡಿದನು; ಕೊಟ್ಟ ದ್ರಾಕ್ಷಾರಸವನ್ನು ಕುಡಿದನು.</verse>
				<verse number="26">ಬಳಿಕ ಅವನ ತಂದೆ ಇಸಾಕನು, “ಮಗನೇ, ಹತ್ತಿರ ಬಂದು ನನಗೆ ಮುತ್ತು ಕೊಡು,” ಎಂದನು. ಅವನು ಹತ್ತಿರ ಬಂದು ಮುದ್ದಿಟ್ಟಾಗ</verse>
				<verse number="27">ಇಸಾಕನು ಅವನ ಉಡುಗೆತೊಡಿಗೆಗಳ ಸುವಾಸನೆಯನ್ನು ಮೂಸಿನೋಡಿ, ಅವನಿಗೆ ಹೀಗೆಂದು ಆಶೀರ್ವಾದ ಮಾಡಿದನು - “ನನ್ನ ಸುಕುಮಾರನಿಂದೇಳುವ ಸುವಾಸನೆ ಸರ್ವೇಶ್ವರನಾಶೀರ್ವದಿಸಿದ ಮೊಗೆನೆಲದ ಸುವಾಸನೆಯಂತಿದೆ.</verse>
				<verse number="28">ದಯಪಾಲಿಸಲಿ ದೇವ ನಿನಗೆ ಆಗಸದ ಮಂಜನು, ಸಾರವುಳ್ಳ ಹೊಲವನು ಅನುಗ್ರಹಿಸಲಿ ಹೇರಳ ದವಸ ಧಾನ್ಯವನು, ದ್ರಾಕ್ಷಾರಸವನು.</verse>
				<verse number="29">ಸೇವೆಗೈಯಲಿ ನಿನಗೆ ಹೊರನಾಡುಗಳು ಅಡ್ಡಬೀಳಲಿ ನಿನಗೆ ಹೊರಜನಾಂಗಗಳು ಒಡೆಯನಾಗು ಸೋದರರಿಗೆ ಅಡ್ಡಬೀಳಲಿ ತಾಯಕುಡಿ ನಿನಗೆ ಶಾಪವಿರಲಿ ನಿನ್ನನ್ನು ಶಪಿಸುವವರಿಗೆ ಆಶೀರ್ವಾದವು ನಿನ್ನನ್ನು ಹರಸುವವರಿಗೆ!”</verse>
				<verse number="30">ಯಕೋಬನು ತಂದೆ ಇಸಾಕನಿಂದ ಆಶೀರ್ವಾದ ಪಡೆದು ಹೊರಟುಹೋದನು. ಕೂಡಲೆ ಅವನ ಅಣ್ಣ ಏಸಾವನು ಬೇಟೆಯಿಂದ ಹಿಂದಿರುಗಿ ಬಂದನು.</verse>
				<verse number="31">ಅವನು ಕೂಡ ಸವಿ ಊಟವನ್ನು ಅಣಿಮಾಡಿ ತಂದೆಯ ಬಳಿಗೆ ತಂದು, “ಅಪ್ಪಾ, ಏಳಿ; ನಿನ್ನ ಮಗನಾದ ನಾನು ತಂದಿರುವ ಬೇಟೆಯ ಮಾಂಸವನ್ನು ಊಟಮಾಡಿ ನನ್ನನ್ನು ಆಶೀರ್ವದಿಸಿ,” ಎಂದು ಕೇಳಿಕೊಂಡನು.</verse>
				<verse number="32">“ನೀನು ಯಾರು?” ಎಂದು ತಂದೆ ಇಸಾಕನು ವಿಚಾರಿಸಲು, “ನಾನೇ ನಿಮ್ಮ ಜ್ಯೇಷ್ಠಪುತ್ರ ಏಸಾವನು” ಎಂದು ಉತ್ತರಕೊಟ್ಟನು.</verse>
				<verse number="33">ಆಗ ಇಸಾಕನು ಗಡಗಡನೆ ನಡುಗುತ್ತಾ, “ಹಾಗಾದರೆ ಬೇಟೆಯಾಡಿ ನನಗೆ ಊಟ ತಂದುಕೊಟ್ಟವನಾರು? ನೀನು ಬರುವುದಕ್ಕೆ ಮುಂಚೆ ಅವನು ತಂದುದನ್ನು ಊಟಮಾಡಿ ಅವನನ್ನೇ ಅಂತಿಮವಾಗಿ ಆಶೀರ್ವದಿಸಿಬಿಟ್ಟೆನು; ಅವನಿಗೆ ಮಾಡಿದ ಆಶೀರ್ವಾದ ಇನ್ನು ತಪ್ಪಲಾರದು,” ಎಂದನು.</verse>
				<verse number="34">ತಂದೆಯ ಈ ಮಾತುಗಳನ್ನು ಕೇಳಿ ಏಸಾವನು ದುಃಖಕ್ರಾಂತನಾದನು. ಬಹಳವಾಗಿ ಅತ್ತನು. “ಅಪ್ಪಾ, ತಂದೆಯೇ ನನ್ನನ್ನು, ನನ್ನನ್ನು ಕೂಡ ಆಶೀರ್ವದಿಸು,” ಎಂದು ಬೇಡಿಕೊಂಡನು.</verse>
				<verse number="35">ಇಸಾಕನು, “ನಿನ್ನ ತಮ್ಮ ಮೋಸದಿಂದ ಬಂದು ನಿನಗಾಗಬೇಕಿದ್ದ ಆಶೀರ್ವಾದವನ್ನು ಪಡೆದುಕೊಂಡು ಹೋದನು,” ಎಂದನು.</verse>
				<verse number="36">ಅದಕ್ಕೆ ಏಸಾವನು, “ಯಕೋಬ’ ಎಂಬ ಹೆಸರು ಅವನಿಗೆ ತಕ್ಕುದಾಗಿದೆ; ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ. ಹಿಂದೆ ನನ್ನ ಜ್ಯೇಷ್ಠತನದ ಹಕ್ಕನ್ನು ಅಪಹರಿಸಿದ; ಈಗ ನನಗೆ ಬರಬೇಕಾಗಿದ್ದ ಆಶೀರ್ವಾದವನ್ನು ಕಿತ್ತುಕೊಂಡಿದ್ದಾನೆ,” ಎಂದು ಹೇಳಿ ತನ್ನ ತಂದೆಯನ್ನು ನೋಡಿ, “ನನಗೆಂದೇ ನಿಮ್ಮಲ್ಲಿ ಯಾವ ಆಶೀರ್ವಾದವೂ ಉಳಿದಿಲ್ಲವೆ?” ಎಂದು ಕೇಳಿದನು.</verse>
				<verse number="37">ಆಗ ಇಸಾಕನು, “ಅವನನ್ನು ನಿನಗೆ ಒಡೆಯನನ್ನಾಗಿ ನೇಮಿಸಿದ್ದೇನೆ; ಸಹೋದರರನ್ನೇ ಅವನಿಗೆ ಕೆಲಸಗಾರರನ್ನಾಗಿ ಕೊಟ್ಟಿದ್ದೇನೆ; ದವಸಧಾನ್ಯಗಳನ್ನೂ ದ್ರಾಕ್ಷಾರಸವನ್ನೂ ಅವನಿಗೆ ಬಿಟ್ಟಿದ್ದೇನೆ. ಹೀಗಿರಲು ಮಗನೇ, ನಾನು ನಿನಗೇನು ತಾನೆ ಮಾಡಲು ಸಾಧ್ಯ?” ಎಂದನು.</verse>
				<verse number="38">“ಅಪ್ಪಾ, ನಿಮ್ಮಲ್ಲಿ ಒಂದೇ ಆಶೀರ್ವಾದ ಮಾತ್ರ ಇತ್ತೋ? ನನ್ನನ್ನು, ನನ್ನನ್ನು ಕೂಡ ಆಶೀರ್ವಾದ ಮಾಡಪ್ಪಾ,” ಎಂದು ಗೋಳಾಡುತ್ತಾ ಅತ್ತನು.</verse>
				<verse number="39">ಆಗ ಇಸಾಕನು - \ಸಾರವತ್ತಾದ ಭೂಮಿಗೆ ದೂರ ಆಗಸದಿಂದೇಳುವ ಮಂಜಿಗೆ ದೂರ ಇರುವುದು ನೀ ನೆಲೆಸುವ ಬಿಡಾರ.</verse>
				<verse number="40">ಬಾಳ ನಡೆಸುವೆ ಕತ್ತಿಕಠಾರಿಯಿಂದಲೇ ಕೂಲಿಯಾಳಾಗುವೆ ಸೋದರನಿಗೆ ಮುರಿಯುವೆ ಅವ ಹೊರಿಸಿದ ನೊಗವ ಸ್ವಾತಂತ್ರ್ಯಕ್ಕಾಗಿ ನೀ ಬಂಡಾಯ ಹೂಡಿದಾಗ,”</verse>
				<verse number="41">ತಂದೆಯಿಂದ ಯಕೋಬನು ಪಡೆದುಕೊಂಡ ಆಶೀರ್ವಾದದ ನಿಮಿತ್ತ ಏಸಾವನು ಯಕೋಬನ ಮೇಲೆ ಹಗೆಗೊಂಡನು. “ತಂದೆಯ ಮರಣಕ್ಕಾಗಿ ದುಃಖಿಸುವ ಕಾಲ ಸಮೀಪಿಸಿತು. ಆ ಬಳಿಕ ನನ್ನ ತಮ್ಮ ಯಕೋಬನನ್ನು ಕೊಂದುಹಾಕುತ್ತೇನೆ,” ಎಂದು ತನ್ನೊಳಗೇ ನೆನಸಿಕೊಂಡನು.</verse>
				<verse number="42">ತನ್ನ ಹಿರಿಯ ಮಗ ಏಸಾವನ ಅನಿಸಿಕೆಯು ರೆಬೆಕ್ಕಳಿಗೆ ತಿಳಿದು ಬಂದಾಗ ಆಕೆ ತನ್ನ ಕಿರಿಯ ಮಗ ಯಕೋಬನನ್ನು ಕರೆದು ಹೀಗೆಂದಳು: “ನೋಡು, ನಿನ್ನ ಅಣ್ಣ ಏಸಾವನು ನಿನ್ನನ್ನು ಕೊಂದು ಸೇಡು ತೀರಿಸಿಕೊಳ್ಳಬೇಕೆಂದಿದ್ದಾನೆ.</verse>
				<verse number="43">ಆದುದರಿಂದ ಮಗನೇ, ನನ್ನ ಮಾತನ್ನು ಕೇಳು; ನೀನು ಎದ್ದು ಖಾರಾನ್ ಊರಿನಲ್ಲಿರುವ ನನ್ನ ಅಣ್ಣ ಲಾಬಾನನ ಬಳಿಗೆ ಓಡಿಹೋಗು.</verse>
				<verse number="44">ಕೆಲವು ಕಾಲ, ಅಂದರೆ ನಿನ್ನಣ್ಣನ ಕೋಪ ಶಮನ ಆಗುವವರೆಗೂ, ಅವನ ಬಳಿಯಲ್ಲೇ ಇರು.</verse>
				<verse number="45">ನಿನ್ನ ಅಣ್ಣನು ನೀನು ಮಾಡಿರುವುದನ್ನು ಮರೆತು ತನ್ನ ಕೋಪವನ್ನು ಬಿಟ್ಟಾಗ ನಾನು ನಿನ್ನನ್ನು ಅಲ್ಲಿಂದ ಕರೆಸಿಕೊಳ್ಳುತ್ತೇನೆ. ನಾನೇತಕ್ಕೆ ನಿಮ್ಮಿಬ್ಬರನ್ನೂ ಒಂದೇ ದಿನದಲ್ಲಿ ಕಳೆದುಕೊಳ್ಳಬೇಕು?” ಎಂದು ಹೇಳಿದಳು.</verse>
				<verse number="46">ಅನಂತರ ರೆಬೆಕ್ಕಳು ಇಸಾಕನಿಗೆ, “ಹಿತ್ತಿಯರಾದ ಈ ಹೆಣ್ಣುಗಳ ದೆಸೆಯಿಂದ ನನ್ನ ಬಾಳು ಬೇಸರವಾಗಿದೆ. ಯಕೋಬನು ಕೂಡ ಈ ನಾಡಿನ ಹೆಣ್ಣನ್ನು ಆರಿಸಿಕೊಂಡು ಇಂಥ ಹಿತ್ತಿಯ ಹುಡುಗಿಯನ್ನೇ ಮದುವೆಮಾಡಿಕೊಂಡರೆ ನಾನು ಇನ್ನು ಬದುಕಿ ಪ್ರಯೋಜನ ಇಲ್ಲ,” ಎಂದು ಹೇಳಿದಳು.</verse>
			</chapter>
			<chapter number="28">
				<verse number="1">ಆಗ ಇಸಾಕನು ಯಕೋಬನನ್ನು ಕರೆದು, “ನೀನು ಕಾನಾನ್ಯರ ಹೆಣ್ಣನ್ನು ಮದುವೆಮಾಡಿಕೊಳ್ಳಬೇಡ;</verse>
				<verse number="2">ಮೆಸಪೊಟೇಮಿಯಾ ನಾಡಿನಲ್ಲಿರುವ ನಿನ್ನ ತಾತ ಬೆತೂವೇಲನ ಮನೆಗೆ ಹೊರಟುಹೋಗು. ಅಲ್ಲಿ ನಿನ್ನ ಸೋದರಮಾವನಾದ ಲಾಬಾನನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೊ,” ಎಂದು ಅಪ್ಪಣೆ ಮಾಡಿದನು.</verse>
				<verse number="3">“ಸರ್ವಶಕ್ತ ದೇವರು ನಿನ್ನನ್ನು ಆಶೀರ್ವದಿಸಲಿ; ನಿನಗೆ ಬಹಳ ಸಂತತಿಯನ್ನು ಕೊಡಲಿ; ನಿನ್ನಿಂದ ಅನೇಕ ಜನಾಂಗಗಳು ಹುಟ್ಟುವಂತೆ ಅನುಗ್ರಹಿಸಲಿ;</verse>
				<verse number="4">ದೇವರು ಅಬ್ರಹಾಮನಿಗೆ ಕೊಟ್ಟ ಆಶೀರ್ವಾದವನ್ನು ನಿನಗೂ ನಿನ್ನ ಸಂತತಿಗೂ ಕೊಡಲಿ; ನೀನು ಪ್ರವಾಸಿಯಾಗಿರುವ ಈ ನಾಡನ್ನು, ಅಂದರೆ ಅಬ್ರಹಾಮನಿಗೆ ದೇವರು ವಾಗ್ದಾನಮಾಡಿದ್ದ ಈ ನಾಡನ್ನು, ನೀನು ಸ್ವಂತ ಸೊತ್ತಾಗಿಸಿಕೊಳ್ಳುವಂತಾಗಲಿ!” ಎಂದು ಹರಸಿ ಕಳುಹಿಸಿಬಿಟ್ಟನು.</verse>
				<verse number="5">ಯಕೋಬನು ಮೆಸಪೊಟೇಮಿಯಗೆ ಹೊರಟು, ಅರಾಮ್ಯನಾದ ಬೆತೂವೇಲನ ಮಗನೂ ಮತ್ತು ಯಕೋಬ ಹಾಗು ಏಸಾವನಿಗೆ ತಾಯಿಯಾದ ರೆಬೆಕ್ಕಳಿಗೆ ಅಣ್ಣನೂ ಆಗಿದ್ದ ಲಾಬಾನನ ಬಳಿಗೆ ಹೋದನು.</verse>
				<verse number="6">ಇಸಾಕನು ಯಕೋಬನನ್ನು ಹರಸಿ ಮೆಸಪೊಟೇಮಿಯಾದಲ್ಲಿ ಹೆಣ್ಣನ್ನು ತೆಗೆದುಕೊಳ್ಳುವುದಕ್ಕಾಗಿ ಕಳುಹಿಸಿದ್ದು, ಹರಸುವಾಗ ಕಾನಾನ್ಯರ ಹೆಣ್ಣನ್ನು ತೆಗೆದುಕೊಳ್ಳಬಾರದೆಂದು ಅಪ್ಪಣೆಮಾಡಿದ್ದು,</verse>
				<verse number="7">ಹಾಗೂ ಯಕೋಬನು ತನ್ನ ತಂದೆ ತಾಯಿಗಳು ಹೇಳಿದಂತೆ ಮೆಸಪೊಟೇಮಿಯಗೆ ಹೋದದ್ದು - ಇದೆಲ್ಲವನ್ನು ಇತ್ತ ಏಸಾವನು ತಿಳಿದುಕೊಂಡನು.</verse>
				<verse number="8">ಕಾನಾನ್ಯರ ಹೆಣ್ಣುಗಳು ತನ್ನ ತಂದೆ ಇಸಾಕನಿಗೆ ಹಿಡಿಸಲಿಲ್ಲ ಎಂಬುದನ್ನು ಅರಿತುಕೊಂಡ ಅವನು</verse>
				<verse number="9">ತನಗೆ ಈಗಾಗಲೇ ಇದ್ದ ಹೆಂಡತಿಯರ ಜೊತೆಗೆ ಅಬ್ರಹಾಮನ ಮಗನಾದ ಇಷ್ಮಾಯೇಲನ ಬಳಿಗೆ ಹೋಗಿ, ಅವನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಮಹಲತ್ ಎಂಬಾಕೆಯನ್ನು ಮದುವೆಮಾಡಿಕೊಂಡನು.</verse>
				<verse number="10">ಯಕೋಬನು ಖಾರಾನಿಗೆ ಹೋಗಬೇಕೆಂದು ಬೇರ್ಷೆಬದಿಂದ ಹೊರಟನು.</verse>
				<verse number="11">ಪ್ರಯಾಣಮಾಡುತ್ತಾ ಅವನು ಒಂದು ಸ್ಥಳಕ್ಕೆ ಬಂದು ಸೇರಿದನು. ಹೊತ್ತು ಮುಳುಗಿದ್ದ ಕಾರಣ ಆ ರಾತ್ರಿ ಅಲ್ಲಿಯೇ ಇಳಿದುಕೊಂಡನು. ಅಲ್ಲಿದ್ದ ಕಲ್ಲುಗಳಲ್ಲಿ ಒಂದು ಕಲ್ಲನ್ನು ತಲೆದಿಂಬಾಗಿ ಇಟ್ಟುಕೊಂಡು ಆ ಸ್ಥಳದಲ್ಲೇ ಮಲಗಿಕೊಂಡನು.</verse>
				<verse number="12">ಆ ರಾತ್ರಿ ಅವನಿಗೆ ಒಂದು ಕನಸು ಬಿತ್ತು, ಆ ಕನಸಿನಲ್ಲಿ ಒಂದು ನಿಚ್ಚಣಿಗೆ ನೆಲದ ಮೆಲೆ ನಿಂತಿತ್ತು; ಅದರ ತುದಿ ಆಕಾಶವನ್ನು ಮುಟ್ಟಿತ್ತು. ಅದರ ಮೇಲೆ ದೇವದೂತರು ಹತ್ತುತ್ತಾ ಇಳಿಯುತ್ತಾ ಇದ್ದರು.</verse>
				<verse number="13">ಇದಲ್ಲದೆ, ಸರ್ವೇಶ್ವರಸ್ವಾಮಿ ಅವನ ಬಳಿಯಲ್ಲೇ ನಿಂತು, “ನಿನ್ನ ತಂದೆಯೂ ಅಬ್ರಹಾಮನ ದೇವರೂ ಇಸಾಕನ ದೇವರೂ ಆಗಿರುವ ಸರ್ವೇಶ್ವರ ನಾನೇ. ನೀನು ಮಲಗಿಕೊಂಡಿರುವ ಈ ನಾಡನ್ನು ನಿನಗೂ ನಿನ್ನ ಸಂತತಿಗೂ ಕೊಡುತ್ತೇನೆ.</verse>
				<verse number="14">ನಿನ್ನ ಸಂತತಿ ಭೂಮಿಯ ಧೂಳಿನಂತೆ ಅಸಂಖ್ಯ ಆಗುವುದು; ನೀನು ಪೂರ್ವಪಶ್ಚಿಮ - ದಕ್ಷಿಣೋತ್ತರ ದಿಕ್ಕುಗಳಿಗೆ ಹರಡಿಕೊಳ್ಳುವೆ. ನಿನ್ನ ಮುಖಾಂತರ ಹಾಗೂ ನಿನ್ನ ಸಂತತಿಯ ಮುಖಾಂತರ ಜಗದ ಎಲ್ಲ ರಾಷ್ಟ್ರಗಳೂ ಆಶೀರ್ವಾದ ಪಡೆಯುವುವು.</verse>
				<verse number="15">ಗಮನಿಸು, ನಾನು ನಿನ್ನೊಂದಿಗೆ ಇರುತ್ತೇನೆ. ನೀನು ಎಲ್ಲಿಗೆ ಹೋದರೂ ನಿನ್ನನ್ನು ಕಾಪಾಡಿ ಈ ನಾಡಿಗೆ ಮರಳಿ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲ ನೆರವೇರಿಸದೆ ಬಿಡುವುದಿಲ್ಲ,” ಎಂದರು.</verse>
				<verse number="16">ಯಕೋಬನು ನಿದ್ರೆಯಿಂದ ಎಚ್ಚೆತ್ತನು. \ನಿಶ್ಚಯವಾಗಿ ಸರ್ವೇಶ್ವರ ಈ ಸ್ಥಳದಲ್ಲಿದ್ದಾರೆ; ಇದು ನನಗೆ ತಿಳಿಯದೆಹೋಯಿತು!” ಎಂದುಕೊಂಡನು;</verse>
				<verse number="17">ಅಲ್ಲದೆ ಭಯಭಕ್ತಿಯಿಂದ, “ಇದು ಮಹಾಗಂಭೀರವಾದ ಸ್ಥಳ; ದೇವರ ಸ್ಥಾನವೇ ಹೊರತು ಬೇರೆಯಲ್ಲ, ಇದು ಪರಲೋಕದ ಬಾಗಿಲು!” ಎಂದನು.</verse>
				<verse number="18">ಯಕೋಬನು ಬೆಳಗಿನ ಜಾವದಲ್ಲಿ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಆ ಕಲ್ಲನ್ನು ಸ್ಮಾರಕಸ್ತಂಭವಾಗಿ ನೆಟ್ಟನು. ಅದರ ಮೇಲೆ ಎಣ್ಣೆ ಹೊಯ್ದು ಅಭ್ಯಂಗಿಸಿದನು.</verse>
				<verse number="19">‘ಲೂಜ್’ ಎಂದು ಹೆಸರು ಪಡೆದಿದ್ದ ಆ ಊರಿಗೆ ‘ಬೇತೇಲ್’ ಎಂದು ನಾಮಕರಣ ಮಾಡಿದನು.</verse>
				<verse number="20">ಅದೂ ಅಲ್ಲದೆ ಅವನು ಹೀಗೆಂದು ಹರಕೆ ಮಾಡಿಕೊಂಡನು; “ದೇವರು ನನ್ನ ಸಂಗಡವಿದ್ದು ನಾನು ಕೈಗೊಂಡ ಪ್ರಯಾಣದಲ್ಲಿ ನನ್ನನ್ನು ಕಾಪಾಡಿ, ಹೊಟ್ಟೆಗೆ ಊಟವನ್ನೂ ಮೈಗೆ ಬಟ್ಟೆಯನ್ನೂ ಕೊಟ್ಟು,</verse>
				<verse number="21">ನನ್ನ ತಂದೆಯ ಮನೆಗೆ ಸುರಕ್ಷಿತವಾಗಿ ಮರಳಿ ಬರಮಾಡಿದರೆ ಸರ್ವೇಶ್ವರಸ್ವಾಮಿಯೇ ನನಗೆ ದೇವರು ಆಗುವರು.</verse>
				<verse number="22">ನಾನು ಸ್ಮಾರಕಸ್ತಂಭವಾಗಿ ನೆಟ್ಟಿರುವ ಈ ಕಲ್ಲು ದೇವರ ಮನೆಯಾಗುವುದು; ಅದು ಮಾತ್ರವಲ್ಲ, ನೀವು ನನಗೆ ಕೊಡುವ ಎಲ್ಲ ಆಸ್ತಿಪಾಸ್ತಿಯಲ್ಲಿ ಹತ್ತರಲ್ಲಿ ಒಂದು ಪಾಲನ್ನು ನಿಮಗೆ ಸಮರ್ಪಿಸುತ್ತೇನೆಂದು ಮಾತುಕೊಡುತ್ತೇನೆ.”</verse>
			</chapter>
			<chapter number="29">
				<verse number="1">ಬಳಿಕ ಯಕೋಬನು ಪ್ರಯಾಣವನ್ನು ಮುಂದುವರಿಸುತ್ತಾ ಮೂಡಣದವರ ನಾಡಿಗೆ ಬಂದನು.</verse>
				<verse number="2">ಕೂಡಲೆ ಅವನಿಗೆ ಆ ಅಡವಿಯಲ್ಲಿ ಬಾವಿಯೊಂದು ಕಾಣಿಸಿತು. ಅದರ ಬಳಿ ಮೂರು ಕುರಿಹಿಂಡು ಮಲಗಿದ್ದವು. ಕುರಿಗಳನ್ನು ನೀರು ಕುಡಿಸುವುದಕ್ಕಾಗಿ ಆ ಬಾವಿಗೆ ಹೊಡೆದುಕೊಂಡು ಬರುವುದು ವಾಡಿಕೆ. ಬಾವಿಯ ಮೇಲೆ ಮುಚ್ಚಿದ್ದ ಕಲ್ಲು ದೊಡ್ಡದಾಗಿತ್ತು.</verse>
				<verse number="3">ಹಿಂಡುಗಳೆಲ್ಲ ಅಲ್ಲಿ ಕೂಡಿದ್ದಾಗ ಕಾಯುವವರು ಬಾವಿಯ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ಕುರಿಗಳಿಗೆ ನೀರು ಕುಡಿಸಿ ಮತ್ತೆ ಕಲ್ಲನ್ನು ಬಾವಿಯ ಮೇಲೆ ಮುಚ್ಚುತ್ತಿದ್ದರು.</verse>
				<verse number="4">ಯಕೋಬನು ಅವರಿಗೆ, “ಏನ್ರಪ್ಪ, ನೀವು ಯಾವ ಊರಿನವರು?” ಎಂದು ವಿಚಾರಿಸಿದನು. ಅವರು, “ನಾವು ಖಾರಾನ್ ಊರಿನವರು,” ಎಂದರು.</verse>
				<verse number="5">“ನಾಹೋರನ ಮಗ-ಲಾಬಾನರನ್ನು ಬಲ್ಲಿರಾ?’ ಎಂದು ಕೇಳಿದ್ದಕ್ಕೆ “ಬಲ್ಲೆವು” ಎಂದು ಉತ್ತರಕೊಟ್ಟರು.</verse>
				<verse number="6">“ಅವರು ಆರೋಗ್ಯವೇ?” ಎಂದು ಕೇಳಲು ಅವರು, “ಹೌದು ಆರೋಗ್ಯ; ಅಗೋ, ಅವರ ಮಗಳು ರಾಖೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ,” ಎಂದರು.</verse>
				<verse number="7">ಯಕೋಬನು, “ಇನ್ನೂ ಬಹಳ ಹೊತ್ತು ಇದೆ; ಕುರಿಗಳನ್ನು ಒಟ್ಟುಗೂಡಿಸುವ ಸಮಯ ಆಗಿಲ್ಲ; ನೀರು ಕುಡಿಸಿ ಅವುಗಳನ್ನು ಮೇಯಿಸಬಾರದೇಕೆ?” ಎಂದನು.</verse>
				<verse number="8">ಅವರು, “ಇಲ್ಲ, ಕುರಿಗಾಹಿಗಳೆಲ್ಲ ಒಂದುಗೂಡಿ ಬಾವಿಯ ಮೇಲೆ ಮುಚ್ಚಿರುವ ಕಲ್ಲನ್ನು ತೆಗೆಯುವ ತನಕ ಕುಡಿಸಕೂಡದು, ಅನಂತರ ಕುರಿಗಳಿಗೆ ನೀರು ಕುಡಿಸುತ್ತೇವೆ,” ಎಂದರು.</verse>
				<verse number="9">ಯಕೋಬನು ಅವರೊಂದಿಗೆ ಮಾತಾಡುತ್ತ ಇರುವಾಗಲೆ ಕುರಿಗಾಹಿ ರಾಖೇಲಳು ತನ್ನ ತಂದೆಯ ಕುರಿಗಳನ್ನು ಹೊಡೆದುಕೊಂಡು ಅಲ್ಲಿಗೆ ಬಂದಳು.</verse>
				<verse number="10">ತನ್ನ ಸೋದರಮಾವ ಲಾಬಾನನ ಮಗಳಾದ ಆ ರಾಖೇಲಳನ್ನೂ ಅವನ ಕುರಿಗಳನ್ನೂ ಕಂಡ ಕೂಡಲೆ ಯಕೋಬನು ಬಾವಿಯ ಹತ್ತಿರಕ್ಕೆ ಹೋಗಿ ಅದರ ಮೇಲಿದ್ದ ಕಲ್ಲನ್ನು ಸರಿಸಿ ಸೋದರಮಾವನ ಆ ಕುರಿಗಳಿಗೆ ನೀರು ಕುಡಿಸಿದನು.</verse>
				<verse number="11">ಅನಂತರ ರಾಖೇಲಳಿಗೆ ಮುದ್ದಿಟ್ಟನು; ಸಂತೋಷ ಉಕ್ಕಿಬಂದು ಗಟ್ಟಿಯಾಗಿ ಅತ್ತನು.</verse>
				<verse number="12">ತಾನು ಆಕೆಯ ತಂದೆಗೆ ಸೋದರಳಿಯ, ರೆಬೆಕ್ಕಳ ಮಗ ಎಂದು ತಿಳಿಸಿದನು. ರಾಖೇಲಳು ಕೂಡಲೆ ಓಡಿಹೋಗಿ ತನ್ನ ತಂದೆಗೆ ಸಮಾಚಾರ ಮುಟ್ಟಿಸಿದಳು.</verse>
				<verse number="13">ಲಾಬಾನನು ತನ್ನ ಸೋದರಳಿಯ ಬಂದ ಸುದ್ದಿಯನ್ನು ಕೇಳಿ ಅವನನ್ನು ಎದುರುಗೊಳ್ಳಲು ಓಡಿಬಂದನು. ಯಕೋಬನನ್ನು ಅಪ್ಪಿಕೊಂಡು ಮುದ್ದಿಟ್ಟು, ಮನೆಗೆ ಕರೆದುಕೊಂಡು ಹೋದನು. ನಡೆದ ಸಂಗತಿಗಳನ್ನೆಲ್ಲ ಯಕೋಬನು ಲಾಬಾನನಿಗೆ ತಿಳಿಸಿದನು.</verse>
				<verse number="14">ಲಾಬಾನನು, “ನಿಜವಾಗಿಯೂ ನೀನು ನನ್ನ ರಕ್ತಸಂಬಂಧಿ,” ಎಂದನು. ಅವನೊಂದಿಗೆ ಯಕೋಬನು ಒಂದು ತಿಂಗಳವರೆಗೂ ವಾಸಮಾಡಿದನು.</verse>
				<verse number="15">ಆ ಬಳಿಕ ಲಾಬಾನನು ಯಕೋಬನಿಗೆ, “ನೀನು ನನ್ನ ಸಂಬಂಧಿಯೆಂದ ಮಾತ್ರಕ್ಕೆ ಬಿಟ್ಟಿ ಸೇವೆ ಮಾಡಿಸಿಕೊಳ್ಳುವುದು ಸರಿಯಲ್ಲ; ನಿನ್ನ ಕೆಲಸಕ್ಕೆ ಏನು ಸಂಬಳ ಕೊಡಲಿ, ಹೇಳು?” ಎಂದು ಕೇಳಿದನು.</verse>
				<verse number="16">ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು. ದೊಡ್ಡವಳ ಹೆಸರು ಲೇಯಾ, ಚಿಕ್ಕವಳ ಹೆಸರು ರಾಖೇಲ್.</verse>
				<verse number="17">ಲೇಯಾ ಹೊಳಪಿನ ಕಣ್ಣಿನವಳು. ರಾಖೇಲಳಾದರೋ ರೂಪವತಿ, ಲಾವಣ್ಯವತಿ.</verse>
				<verse number="18">ಯಕೋಬನಿಗೆ ರಾಖೇಲಳ ಮೇಲೆ ಪ್ರೀತಿ. ಎಂತಲೇ, “ನಿಮ್ಮ ಕಿರಿಯ ಮಗಳು ರಾಖೇಲಳಿಗೋಸ್ಕರ ನಿಮ್ಮಲ್ಲಿ ಏಳು ವರುಷ ಸೇವೆಮಾಡುತ್ತೇನೆ,” ಎಂದು ಹೇಳಿದನು.</verse>
				<verse number="19">ಲಾಬಾನನು, “ಆಕೆಯನ್ನು ಬೇರೆ ಒಬ್ಬನಿಗೆ ಕೊಡುವುದಕ್ಕಿಂತ ನಿನಗೆ ಕೊಡುವುದೇ ಲೇಸು, ನನ್ನಲ್ಲೇ ತಂಗಿರು,” ಎಂದನು.</verse>
				<verse number="20">ಅಂತೆಯೇ ಯಕೋಬನು ರಾಖೇಲಳಿಗಾಗಿ ಏಳು ‌ವರ್ಷ‌ಕಾಲ ಸೇವೆಮಾಡಿದನು. ಆಕೆಯ ಮೇಲೆ ಅವನಿಗೆ ಬಹಳ ಪ್ರೀತಿಯಿದ್ದುದರಿಂದ ಅದು ಅವನಿಗೆ ಕೇವಲ ಕೆಲವೇ ದಿನಗಳಂತೆ ಕಾಣಿಸಿತು.</verse>
				<verse number="21">ತರುವಾಯ ಯಕೋಬನು ಲಾಬಾನನಿಗೆ, “ನನ್ನ ಸೇವಾವಧಿ ಮುಗಿಯಿತು. ಆಕೆ ನನ್ನ ಹೆಂಡತಿಯಾಗುವಂತೆ ನನ್ನ ಸ್ವಾಧೀನಕ್ಕೆ ಕೊಡಿ,” ಎಂದು ಕೇಳಿದನು.</verse>
				<verse number="22">ಆಗ ಲಾಬಾನನು ಊರಿನವರನ್ನೆಲ್ಲ ಕರೆಯಿಸಿ ಔತಣವನ್ನು ಏರ್ಪಡಿಸಿದನು.</verse>
				<verse number="23">ರಾತ್ರಿಯಾದಾಗ ತನ್ನ ಹಿರಿಯ ಮಗಳು ಲೇಯಳನ್ನೇ ಯಕೋಬನ ಬಳಿಗೆ ಕರೆತಂದನು. ಯಕೋಬನು ಆಕೆಯನ್ನು ಕೂಡಿದನು. (</verse>
				<verse number="24">ಲಾಬಾನನು ತನ್ನ ಮಗಳು ಲೇಯಳಿಗೆ ಜಿಲ್ಪಾ ಎಂಬ ಒಬ್ಬ ದಾಸಿಯನ್ನು ಕೊಟ್ಟನು.)</verse>
				<verse number="25">ಆ ಹೆಣ್ಣು ಲೇಯಳೆಂದು ಯಕೋಬನಿಗೆ ಬೆಳಿಗ್ಗೆ ತಿಳಿಯಿತು. ಅವನು ಲಾಬಾನನಿಗೆ, “ನೀವು ನನಗೇಕೆ ಹೀಗೆ ಮಾಡಿದಿರಿ? ರಾಖೇಲಳಿಗಾಗಿ ಅಲ್ಲವೆ ನಾನು ನಿಮಗೆ ಸೇವೆಮಾಡಿದ್ದು? ನನಗೆ ಮೋಸಮಾಡಿದ್ದೇಕೆ?” ಎಂದು ಕೇಳಿದನು.</verse>
				<verse number="26">ಅದಕ್ಕೆ ಲಾಬಾನನು, “ಹಿರಿಯ ಮಗಳನ್ನು ಇರಿಸಿಕೊಂಡು ಕಿರಿಯ ಮಗಳನ್ನು ಮದುವೆಮಾಡಿಕೊಡುವುದು ನಮ್ಮ ನಾಡಿನ ಪದ್ಧತಿಯಲ್ಲ.</verse>
				<verse number="27">ಹಿರಿಯಳೊಡನೆ ಮದುವೆಯ ವಾರವನ್ನು ಕಳೆದುಬಿಡು; ಅನಂತರ ಕಿರಿಯ ಮಗಳನ್ನೂ ನಿನಗೆ ಕೊಡುತ್ತೇನೆ. ಅವಳಿಗೋಸ್ಕರ ನೀನು ಇನ್ನೂ ಏಳು ವರ್ಷ ಸೇವೆಮಾಡುವೆಯಂತೆ,” ಎಂದನು.</verse>
				<verse number="28">ಯಕೋಬನು ಅದಕ್ಕೆ ಒಪ್ಪಿ ಹಿರಿಯವಳೊಂದಿಗೆ ಮದುವೆಯ ವಾರವನ್ನು ಕಳೆದನು. ಬಳಿಕ ಲಾಬಾನನು ತನ್ನ ಮಗಳು ರಾಖೇಲಳನ್ನು ಯಕೋಬನಿಗೆ ಹೆಂಡತಿಯಾಗಿ ಕೊಟ್ಟನು.</verse>
				<verse number="29">(ಆಕೆಗೆ ಬಿಲ್ಹಾ ಎಂಬ ಒಬ್ಬ ದಾಸಿಯನ್ನು ಕೊಟ್ಟನು.)</verse>
				<verse number="30">ಯಕೋಬನು ರಾಖೇಲಳನ್ನು ಕೂಡಿದನು. ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿ ಇನ್ನೂ ಏಳು ವರ್ಷ ಸೇವೆಮಾಡಿದನು.</verse>
				<verse number="31">ಹೀಗಿರಲು ಲೇಯಳ ಬಗ್ಗೆ ಯಕೋಬನಿಗೆ ಉದಾಸೀನ ಉಂಟಾಯಿತು. ಇದನ್ನು ಕಂಡು ಸರ್ವೇಶ್ವರಸ್ವಾಮಿ ಆಕೆಗೆ ತಾಯ್ತನವನ್ನು ಅನುಗ್ರಹಿಸಿದರು; ರಾಖೇಲಳು ಬಂಜೆಯಾಗೇ ಉಳಿದಳು.</verse>
				<verse number="32">ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. “ಸರ್ವೇಶ್ವರ ನನ್ನ ದೀನ ಸ್ಥಿತಿಯನ್ನು ನೋಡಿದ್ದಾರೆ, ಇನ್ನು ಮುಂದೆ ಗಂಡ ನನ್ನನ್ನು ಪ್ರೀತಿಸುತ್ತಾನೆ,” ಎಂದುಕೊಂಡು ಆ ಮಗುವಿಗೆ ‘ರೂಬೇನ್’ ಎಂದು ಹೆಸರಿಟ್ಟಳು.</verse>
				<verse number="33">ಆಕೆ, ಇನ್ನೊಮ್ಮೆ ಗರ್ಭಿಣಿಯಾಗಿ ಗಂಡು ಮಗುವನ್ನೇ ಹೆತ್ತಳು. “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆ, ಇದನ್ನು ತಿಳಿದೇ ಸರ್ವೇಶ್ವರ ನನಗೆ ಈ ಮಗನನ್ನು ದಯಪಾಲಿಸಿದರು,” ಎಂದು ಹೇಳಿ ಆ ಮಗನಿಗೆ ‘ಸಿಮೆಯೋನ್’ ಎಂದು ಹೆಸರಿಟ್ಟಳು.</verse>
				<verse number="34">ಮತ್ತೊಮ್ಮೆ ಗರ್ಭಧರಿಸಿ ಗಂಡು ಮಗುವನ್ನೇ ಹೆತ್ತಳು. “ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುತ್ತೇವೆ. ಅವರಿಗೆ ಮೂರು ಮಂದಿ ಗಂಡುಮಕ್ಕಳನ್ನು ಹೆತ್ತಿದ್ದೇನಲ್ಲವೆ,” ಎಂದುಕೊಂಡು ಆ ಮಗುವಿಗೆ ‘ಲೇವಿ’ ಎಂದು ಹೆಸರಿಟ್ಟಳು.</verse>
				<verse number="35">ಮಗದೊಮ್ಮೆ ಗರ್ಭಧರಿಸಿ ಈ ಸಾರಿಯೂ ಗಂಡು ಮಗುವನ್ನೇ ಹೆತ್ತಳು. \ಈಗ ಸರ್ವೇಶ್ವರಸ್ವಾಮಿಯ ಸ್ತುತಿಮಾಡುತ್ತೇನೆ,“ ಎಂದು ಹೇಳಿ ಆ ಮಗುವಿಗೆ “ಯೆಹೂದ\ ಎಂದು ನಾಮಕರಣ ಮಾಡಿದಳು. ಆ ಮೇಲೆ ಆಕೆಗೆ ಗರ್ಭಧಾರಣೆ ಆಗುವುದು ನಿಂತುಹೋಯಿತು.</verse>
			</chapter>
			<chapter number="30">
				<verse number="1">ರಾಖೇಲಳು ತಾನು ಯಕೋಬನಿಗೆ ಮಕ್ಕಳನ್ನು ಹೆರಲಿಲ್ಲವೆಂದುಕೊಂಡು ತನ್ನ ಅಕ್ಕನ ಮೇಲೆ ಹೊಟ್ಟೆಕಿಚ್ಚು ಪಟ್ಟಳು. ಅಲ್ಲದೆ ಯಕೋಬನಿಗೆ, “ನನಗೆ ಮಕ್ಕಳನ್ನು ಕೊಡು; ಇಲ್ಲದಿದ್ದರೆ ಸಾಯುತ್ತೇನೆ,” ಎಂದು ಹೇಳಿದಳು.</verse>
				<verse number="2">ಯಕೋಬನು ಆಕೆಯ ಮೇಲೆ ಸಿಟ್ಟುಗೊಂಡು, \ನಾನೇನು ದೇವರೋ? ಅವರೇ ಅಲ್ಲವೆ ನಿನಗೆ ಮಕ್ಕಳನ್ನು ಕೊಡದೆ ಇರುವುದು?” ಎಂದು ಉತ್ತರಕೊಟ್ಟನು.</verse>
				<verse number="3">ಅದಕ್ಕೆ ರಾಖೇಲಳು, “ನನ್ನ ದಾಸಿ ಬಿಲ್ಹಾ ಇದ್ದಾಳಲ್ಲವೆ? ಅವಳನ್ನು ಕೂಡಿ, ಅವಳು ನನಗಾಗಿ ಒಂದು ಮಗುವನ್ನು ಹೆತ್ತು ನನ್ನ ಮಡಿಲಲ್ಲಿ ಇಡಲಿ; ಆಗ ಅವಳ ಮುಖಾಂತರ ನನಗೆ ಸಂತಾನ ಪ್ರಾಪ್ತಿಯಾಗುವುದು,” ಎಂದಳು.</verse>
				<verse number="4">ಅಂತೆಯೇ ದಾಸಿ ಬಿಲ್ಹಾಳನ್ನು ತನ್ನ ಗಂಡನಿಗೆ ಒಪ್ಪಿಸಿದಳು.</verse>
				<verse number="5">ಅವನು ಬಿಲ್ಹಾಳನ್ನು ಕೂಡಲು ಅವಳು ಗರ್ಭಿಣಿಯಾಗಿ ಒಂದು ಗಂಡು ಮಗುವನ್ನು ಹೆತ್ತಳು.</verse>
				<verse number="6">ಆಗ ರಾಖೇಲಳು, “ದೇವರು ನನಗೆ ನ್ಯಾಯ ದೊರಕಿಸಿದ್ದಾರೆ, ನನ್ನ ಮೊರೆಯನ್ನು ಕೇಳಿ ನನಗೆ ಮಗನನ್ನು ಅನುಗ್ರಹಿಸಿದ್ದಾರೆ,” ಎಂದು ಹೇಳಿ ಆ ಮಗುವಿಗೆ ‘ದಾನ್’ ಎಂದು ಹೆಸರಿಟ್ಟಳು.</verse>
				<verse number="7">ಆ ದಾಸಿ ಬಿಲ್ಹಾಳು ಮತ್ತೆ ಗರ್ಭವತಿಯಾಗಿ ಯಕೋಬನಿಗೆ ಎರಡನೆಯ ಗಂಡು ಮಗುವನ್ನು ಹೆತ್ತಳು.</verse>
				<verse number="8">ಆಗ ರಾಖೇಲಳು, “ನನ್ನ ಅಕ್ಕನ ಸಂಗಡ ಬಹಳವಾಗಿ ಹೋರಾಡಿ ಗೆದ್ದಿದ್ದೇನೆ,” ಎಂದು ಹೇಳಿ ಆ ಮಗುವನ್ನು ‘ನಫ್ತಾಲಿ’ ಎಂದು ಹೆಸರಿಸಿದಳು.</verse>
				<verse number="9">ಲೇಯಳು ತನಗೆ ಹೆರಿಗೆ ನಿಂತುಹೋಗಿ ಇರುವುದನ್ನು ತಿಳಿದು ತನ್ನ ದಾಸಿ ಜಿಲ್ಪಳನ್ನು ಯಕೋಬನಿಗೆ ಹೆಂಡತಿಯಾಗಿ ಒಪ್ಪಿಸಿದಳು.</verse>
				<verse number="10">ದಾಸಿ ಜಿಲ್ಪಳೂ ಯಕೋಬನಿಗೆ ಒಂದು ಗಂಡು ಮಗುವನ್ನು ಹೆತ್ತಳು.</verse>
				<verse number="11">ಲೇಯಳು, “ನನಗೆ ಶುಭವಾಯಿತು,” ಎಂದುಕೊಂಡು ಆ ಮಗುವಿಗೆ ‘ಗಾದ್’ ಎಂದು ಹೆಸರಿಟ್ಟಳು.</verse>
				<verse number="12">ಲೇಯಳ ದಾಸಿ ಆ ಜಿಲ್ಪಳು ಯಕೋಬನಿಗೆ ಇನ್ನೂ ಒಂದು ಗಂಡು ಮಗುವನ್ನು ಹೆತ್ತಳು.</verse>
				<verse number="13">ಆಗ ಲೇಯಳು, “ನಾನು ಧನ್ಯಳಾದೆ, ಮಹಿಳೆಯರು ನನ್ನನ್ನು ಧನ್ಯಳೆಂದು ಹೊಗಳುವರು,” ಎಂದುಕೊಂಡು ಆ ಮಗುವಿಗೆ ‘ಆಶೇರ್’ ಎಂದು ಹೆಸರಿಟ್ಟಳು.</verse>
				<verse number="14">ಗೋದಿಯ ಸುಗ್ಗಿ ಕಾಲದಲ್ಲಿ ರೂಬೇನನು ಹೊಲದ ಕಡೆ ಹೊಗುತ್ತಿದ್ದಾಗ ಕಾಮೋದ್ದೀಪಕ ಹಣ್ಣುಗಳನ್ನು ಕಂಡನು. ಅವನ್ನು ತಂದು ತನ್ನ ತಾಯಿ ಲೇಯಳಿಗೆ ಕೊಟ್ಟನು. ರಾಖೇಲಳು ಆಕೆಗೆ, “ನಿನ್ನ ಮಗ ತಂದಿರುವ ಕಾಮೋದ್ದೀಪಕ ಫಲಗಳಲ್ಲಿ ಕೆಲವನ್ನು ನನಗೆ ಕೊಡಕ್ಕಾ,” ಎಂದು ಕೇಳಿಕೊಂಡಳು.</verse>
				<verse number="15">ಅದಕ್ಕೆ ಲೇಯಳು, “ನೀನು ನನ್ನ ಗಂಡನನ್ನು ಅಪಹರಿಸಿದ್ದು ಸಾಲದೆಂದು ನನ್ನ ಮಗ ತಂದ ಕಾಮೋದ್ದೀಪಕ ಹಣ್ಣುಗಳನ್ನೂ ತೆಗೆದುಕೊಳ್ಳಬೇಕೆಂದಿರುವೆಯಾ?” ಎಂದು ಬದಲಿತ್ತಳು. ಆಗ ರಾಖೇಲಳು, “ಸರಿ, ನೀನು ನಿನ್ನ ಮಗನು ತಂದ ಕಾಮೋದ್ದೀಪಕ ಹಣ್ಣುಗಳನ್ನು ನನಗೆ ಕೊಟ್ಟೆಯಾದರೆ ಇಂದಿನ ರಾತ್ರಿ ಅವರು ನಿನ್ನೊಡನೆ ಮಲಗಬಹುದು,” ಎಂದಳು.</verse>
				<verse number="16">ಸಂಜೆ ಯಕೋಬನು ಹೊರಗಡೆಯಿಂದ ಬಂದಾಗ ಲೇಯಳು ಅವನೆದುರಿಗೆ ಹೋಗಿ, “ನೀವು ನನ್ನೊಡನೆ ಕೂಡಬೇಕು. ನಾನು ನನ್ನ ಮಗ ತಂದ ಕಾಮೋದ್ದೀಪಕ ಹಣ್ಣುಗಳನ್ನು ಕೊಟ್ಟು ನಿಮ್ಮನ್ನು ಕೊಂಡುಕೊಂಡಿದ್ದೇನೆ,” ಎಂದಳು. ಅಂದಿನ ರಾತ್ರಿ ಯಕೋಬನು ಆಕೆಯೊಡನೆ ಕೂಡಿದನು.</verse>
				<verse number="17">ದೇವರು ಲೆಯಳ ಪ್ರಾರ್ಥನೆಯನ್ನು ಕೇಳಿದರು. ಆಕೆ ಗರ್ಭಿಣಿಯಾಗಿ ಯಕೋಬನಿಗೆ ಐದನೆಯ ಗಂಡು ಮಗುವನ್ನು ಹೆತ್ತಳು.</verse>
				<verse number="18">“ನಾನು ನನ್ನ ದಾಸಿಯನ್ನು ಗಂಡನಿಗೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ಆಕೆ ಆ ಮಗುವಿಗೆ ‘ಇಸ್ಸಾಕಾರ್’ ಎಂದು ಹೆಸರಿಟ್ಟಳು.</verse>
				<verse number="19">ಲೇಯಳು ಮತ್ತೊಮ್ಮೆ ಗರ್ಭಧರಿಸಿ ಯಕೋಬನಿಗೆ ಆರನೆಯ ಗಂಡು ಮಗುವನ್ನು ಹೆತ್ತಳು.</verse>
				<verse number="20">“ದೇವರು ನನಗೆ ಒಳ್ಳೆಯ ವರದಾನವನ್ನು ಕೊಟ್ಟಿದ್ದಾರೆ. ನಾನು ನನ್ನ ಗಂಡನಿಗೆ ಆರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನೆ. ಆದುದರಿಂದ ಅವರು ನನ್ನೊಡನೆಯೇ ವಾಸಿಸುವರು,” ಎಂದು ಹೆಳಿಕೊಂಡು ಆ ಮಗುವಿಗೆ ‘ಜೆಬುಲೂನ್’ ಎಂದು ಹೆಸರಿಟ್ಟಳು.</verse>
				<verse number="21">ತರುವಾಯ ಆಕೆ ಒಂದು ಹೆಣ್ಣು ಮಗುವನ್ನು ಹೆತ್ತು ಅದಕ್ಕೆ ‘ದೀನಾ’ ಎಂದು ನಾಮಕರಣ ಮಾಡಿದಳು.</verse>
				<verse number="22">ಇದಾದ ಬಳಿಕ ದೇವರು ರಾಖೇಲಳನ್ನು ನೆನೆಸಿಕೊಂಡರು. ಆಕೆಯ ಮೊರೆಯನ್ನು ಕೇಳಿ ಆಕೆಗೂ ಮಕ್ಕಳಾಗುವಂತೆ ಅನುಗ್ರಹಿಸಿದರು.</verse>
				<verse number="23">ಆಕೆ ಗರ್ಭಧರಿಸಿ ಒಂದು ಗಂಡು ಮಗುವನ್ನು ಹೆತ್ತಳು. ” ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾರೆ;</verse>
				<verse number="24">ಸರ್ವೇಶ್ವರ ನನಗೆ ಇನ್ನೂ ಒಂದು ಗಂಡು ಮಗುವನ್ನು ಅನುಗ್ರಹಿಸಲಿ,” ಎಂದುಕೊಂಡು ಆ ಮಗುವಿಗೆ ‘ಜೋಸೆಫ್’ ಎಂದು ನಾಮಕರಣ ಮಾಡಿದಳು.</verse>
				<verse number="25">ರಾಖೇಲಳು ಜೋಸೆಫನನ್ನು ಹೆತ್ತ ಬಳಿಕ ಯಕೋಬನು ಲಾಬಾನನಿಗೆ, “ನನಗೆ ಅಪ್ಪಣೆಯಾಗಬೇಕು, ನಾನು ಸ್ವಂತ ಊರಿಗೂ ನಾಡಿಗೂ ಹಿಂದಿರುಗಬೇಕಾಗಿದೆ.</verse>
				<verse number="26">ನಾನು ದುಡಿದು ಪಡೆದ ಹೆಂಡತಿಯರನ್ನೂ ಮಕ್ಕಳನ್ನೂ ಕಳಿಸಿಕೊಡಿ, ನಾನು ಹೊರಡುತ್ತೇನೆ. ನಿಮಗೆ ನಾನು ಮಾಡಿದ ಸೇವೆ ಎಷ್ಟೆಂದು ನಿಮಗೇ ತಿಳಿದಿದೆ,” ಎಂದು ಹೇಳಿದನು.</verse>
				<verse number="27">ಅದಕ್ಕೆ ಲಾಬಾನನು, “ನನ್ನ ಮೇಲೆ ದಯವಿಟ್ಟು ನನ್ನ ಬಳಿಯಲ್ಲೇ ತಂಗಿರು. ಸರ್ವೇಶ್ವರ ಸ್ವಾಮಿ ನಿನ್ನ ನಿಮಿತ್ತ ನನ್ನನ್ನು ಅಭಿವೃದ್ಧಿಗೊಳಿಸಿದ್ದಾರೆಂದು ಶಾಸ್ತ್ರೋಕ್ತವಾಗಿ ತಿಳಿದುಕೊಂಡಿದ್ದೇನೆ.</verse>
				<verse number="28">ನಿನಗೆ ಏನು ಕೂಲಿ ಕೊಡಬೇಕು ಹೇಳು, ಕೊಡುತ್ತೇನೆ,” ಎಂದು ಉತ್ತರಕೊಟ್ಟನು.</verse>
				<verse number="29">ಅದಕ್ಕೆ ಯಕೋಬನು, “ನಾನು ನಿಮಗೆ ಎಷ್ಟು ಸೇವೆ ಮಾಡಿದ್ದೇನೆಂಬುದೂ ನನ್ನ ವಶದಲ್ಲಿದ್ದ ನಿಮ್ಮ ಪಶುಪ್ರಾಣಿಗಳು ಹೇಗೆ ಅಭಿವೃದ್ಧಿ ಆಗಿವೆ ಎಂಬುದನ್ನೂ ನೀವೇ ಬಲ್ಲಿರಿ.</verse>
				<verse number="30">ನಾನು ಬರುವುದಕ್ಕೆ ಮೊದಲು ನಿಮಗಿದ್ದ ಕೆಲವು ಈಗ ಬಹಳವಾಗಿ ಹೆಚ್ಚಿವೆ. ನಾನು ಹೋದ ಕಡೆಗಳಲ್ಲೆಲ್ಲ ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸಿದ್ದಾರೆ. ಆದರೆ ನಾನು ನನ್ನ ಸ್ವಂತ ಮನೆತನಕ್ಕಾಗಿ ಸಂಪಾದಿಸುವುದು ಯಾವಾಗ?” ಎಂದನು.</verse>
				<verse number="31">ಆಗ ಲಾಬಾನನು, “ನಿನಗೆ ನಾನೇನು ಕೊಡಬೇಕು ಹೇಳು?” ಎಂದನು. ಯಕೋಬನು, “ನನಗೇನೂ ಕೊಡಬೇಕಾಗಿಲ್ಲ; ಒಂದೇ ಒಂದು ಕಾರ್ಯಕ್ಕೆ ಒಪ್ಪಿಗೆ ನೀಡಿದರೆ, ನಾನು ಮತ್ತೆ ನಿಮ್ಮ ಮಂದೆಯನ್ನು ಮೇಯಿಸಿಕೊಂಡು ಬರುತ್ತೇನೆ;</verse>
				<verse number="32">ಅದೇನೆಂದರೆ, ಈ ದಿನ ನಾನು ನಿಮ್ಮ ಮಂದೆಗಳಿಗೆ ಹೋಗಿ ವಿಕಾರ ಬಣ್ಣವುಳ್ಳವುಗಳನ್ನೆಲ್ಲ ಅಂದರೆ, ಕುರಿಮರಿಗಳಲ್ಲಿ ಕಪ್ಪಾಗಿರುವವುಗಳನ್ನೂ ಆಡುಮರಿಗಳಲ್ಲಿ ಚುಕ್ಕೆ ಅಥವಾ ಮಚ್ಚೆವುಳ್ಳವುಗಳನ್ನೂ ವಿಂಗಡಿಸುತ್ತೇನೆ. ಅವೇ ನನ್ನ ಸಂಬಳ ಎಂದು ನೀವು ಭಾವಿಸಬೇಕು.</verse>
				<verse number="33">ಇನ್ನು ಮೇಲೆ ನೀವು ಬಂದು ನನ್ನವುಗಳನ್ನು ಪರೀಕ್ಷಿಸುವಾಗ ನಾನು ಪ್ರಮಾಣಿಕನೋ ಇಲ್ಲವೋ ಎಂಬುದು ಪ್ರತ್ಯಕ್ಷವಾಗುವುದು. ಆಡುಗಳಲ್ಲಿ ಚುಕ್ಕೆ ಮಚ್ಚೆ ಇಲ್ಲದ್ದೂ ಕುರಿಗಳಲ್ಲಿ ಕಪ್ಪಲ್ಲದ್ದೂ ನನ್ನವುಗಳಲ್ಲಿ ಸಿಕ್ಕಿದರೆ, ಅದನ್ನು ಕದ್ದು ತಂದದ್ದೆಂದು ಎಣಿಸಬಹುದು,” ಎಂದನು.</verse>
				<verse number="34">ಅದಕ್ಕೆ ಲಾಬಾನನು, “ಒಳ್ಳೆಯದು, ನೀನು ಹೇಳಿದಂತೆಯೇ ಆಗಲಿ,” ಎಂದನು.</verse>
				<verse number="35">ಆದರೆ ಅದೇ ದಿನ ಲಾಬಾನನು ಹೋತಗಳಲ್ಲಿ ರೇಖೆ, ಮಚ್ಚೆ ಇದ್ದವುಗಳನ್ನೂ, ಮೇಕೆಗಳಲ್ಲಿ ಚುಕ್ಕೆ, ಮಚ್ಚೆ ಇದ್ದವುಗಳನ್ನೂ ಅಂದರೆ, ಸ್ವಲ್ಪ ಬಿಳುಪಾದ ಬಣ್ಣ ತೋರಿದ ಎಲ್ಲವುಗಳನ್ನೂ, ಕುರಿಗಳಲ್ಲಿ ಕಪ್ಪಾಗಿದ್ದವುಗಳನ್ನೂ ವಿಂಗಡಿಸಿ ತನ್ನ ಮಕ್ಕಳ ವಶಕ್ಕೆ ಒಪ್ಪಿಸಿಬಿಟ್ಟನು.</verse>
				<verse number="36">ಅಲ್ಲದೆ, ತನಗೂ ತನ್ನ ಉಳಿದ ಮಂದೆಯನ್ನು ಮೇಯಿಸುತ್ತಿದ್ದ ಯಕೋಬನಿಗೂ ಮಧ್ಯೆ ಮೂರು ದಿನದ ಪ್ರಯಾಣದಷ್ಟು ದೂರದ ಅಂತರವಿರುವಂತೆ ಮಾಡಿಬಿಟ್ಟನು.</verse>
				<verse number="37">ಹೀಗಿರುವಲ್ಲಿ ಯಕೋಬನು ಚಿನಾರು, ಬಾದಾಮಿ, ಆರ್ಮೋನ್ ಎಂಬ ಮರಗಳಿಂದ ಹಸಿಕೋಲುಗಳನ್ನು ತೆಗೆದುಕೊಂಡು ಪಟ್ಟಿಪಟ್ಟಿಯಾಗಿ ತೊಗಟೆಯನ್ನು ಸುಲಿದು ಅವುಗಳಲ್ಲಿ ಇರುವ ಬಿಳಿಯ ಬಣ್ಣವು ಕಾಣಿಸುವಂತೆ ಮಾಡಿ</verse>
				<verse number="38">ಅವುಗಳನ್ನು ಆಡುಕುರಿಗಳ ಹಿಂಡು, ನೀರು ಕುಡಿಯುವ ತೊಟ್ಟಿಗಳಲ್ಲಿ ಇಟ್ಟನು. ಆಡುಕುರಿಗಳಿಗೆ ನೀರು ಕುಡಿಯುವ ಸಮಯ, ಸಂಗಮ ಸಮಯ.</verse>
				<verse number="39">ಅವು ಆ ಕೋಲುಗಳನ್ನು ನೋಡುತ್ತಾ ಸಂಗಮ ಮಾಡಿದ್ದರಿಂದ ರೇಖೆ, ಚುಕ್ಕೆ, ಮಚ್ಚೆಗಳುಳ್ಳ ಮರಿಗಳನ್ನು ಈದುವು.</verse>
				<verse number="40">ಯಕೋಬನು ಆ ಮರಿಗಳನ್ನು ಲಾಬಾನನ ಹಿಂಡಿಗೆ ಸೇರಿಸದೆ ತನ್ನವೆಂದೇ ಬೇರ್ಪಡಿಸಿದನು; ಲಾಬಾನನ ಆಡುಕುರಿಗಳ ಮುಖವನ್ನು ರೇಖೆಯುಳ್ಳ ಆ ಆಡುಗಳ ಮತ್ತು ಕಪ್ಪಾದ ಆ ಕುರಿಗಳ ಕಡೆಗೆ ತಿರುಗಿಸಿದನು.</verse>
				<verse number="41">ಇದಲ್ಲದೆ ಬಲಿಷ್ಠವಾದ ಆಡುಕುರಿಗಳು ಸಂಗಮ ಮಾಡುವಾಗ ಆ ಕೋಲುಗಳನ್ನು ನೋಡುತ್ತಾ ಸಂಗಮ ಮಾಡಲಿ ಎಂದು ಯಕೋಬನು ನೀರಿನ ತೊಟ್ಟಿಯಲ್ಲಿ ಆ ಕೋಲುಗಳನ್ನಿಟ್ಟನು. ಬಲಹೀನ ಆಡುಕುರಿಗಳ ಮುಂದೆ ಹಾಗೆ ಇಡಲಿಲ್ಲ.</verse>
				<verse number="42">ಹೀಗೆ ಬಲವಿಲ್ಲದವುಗಳು ಲಾಬಾನನ ಪಾಲಿಗೆ, ಬಲಿಷ್ಠವಾದವುಗಳು ಯಕೋಬನ ಪಾಲಿಗೆ ಬಂದವು.</verse>
				<verse number="43">ಈ ಪ್ರಕಾರ ಯಕೋಬನು ಬಹಳ ಸಂಪತ್ತುಳ್ಳವನಾದನು; ಅವನಿಗೆ ದೊಡ್ಡ ಹಿಂಡುಗಳು ಮಾತ್ರವಲ್ಲ ದಾಸದಾಸಿಯರೂ ಒಂಟೆ ಕತ್ತೆಗಳೂ ಹೇರಳವಾಗಿದ್ದವು.</verse>
			</chapter>
			<chapter number="31">
				<verse number="1">ಲಾಬಾನನ ಮಕ್ಕಳು, “ನಮ್ಮ ತಂದೆಯ ಆಸ್ತಿಪಾಸ್ತಿಯೆಲ್ಲ ಯಕೋಬನ ಪಾಲಾಯಿತು. ನಮ್ಮ ತಂದೆಯ ಆಸ್ತಿಯಿಂದಲೇ ಅವನು ಇಷ್ಟು ಐಶ್ವರ್ಯವನ್ನು ಶೇಖರಿಸಿದ್ದು,” ಎಂದು ಆಡಿಕೊಂಡರು.</verse>
				<verse number="2">ಇದಲ್ಲದೆ, ಯಕೋಬನ ಕಣ್ಣಿಗೆ ಲಾಬಾನನ ಮನೋಭಾವವು ಮೊದಲಿದ್ದಂತೆ ತೋರಲಿಲ್ಲ.</verse>
				<verse number="3">ಆಗ ಸರ್ವೇಶ್ವರ ಸ್ವಾಮಿ ಅವನಿಗೆ, “ನಿನ್ನ ತಂದೆ ತಾತಂದಿರ ನಾಡಿಗೂ ನಿನ್ನ ಬಂಧುಬಳಗದವರ ಬಳಿಗೂ ಹಿಂದಿರುಗು. ನಾನು ನಿನ್ನೊಂದಿಗೆ ಇರುತ್ತೇನೆ,” ಎಂದು ಹೇಳಿದರು.</verse>
				<verse number="4">ಆದುದರಿಂದ ಯಕೋಬನು ರಾಖೇಲಳನ್ನು ಮತ್ತು ಲೇಯಳನ್ನು ತಾನು ಆಡುಕುರಿ ಮೇಯಿಸುತ್ತಿದ್ದ ಅಡವಿಗೆ ಕರೆಸಿದನು.</verse>
				<verse number="5">ಅಲ್ಲಿ ಅವರಿಗೆ, “ನನ್ನ ವಿಷಯದಲ್ಲಿ ನಿಮ್ಮ ತಂದೆಯ ಮನೋಭಾವ ಮೊದಲಿದ್ದಂತೆ ಇಲ್ಲವೆಂದು ಕಂಡುಬಂದಿದೆ. ಆದರೂ ನನ್ನ ತಂದೆಯ ದೇವರು ನನ್ನೊಂದಿಗೆ ಇದ್ದಾರೆ.</verse>
				<verse number="6">ನಿಮಗೆ ತಿಳಿದಿರುವಂತೆ ನಾನು ನಿಮ್ಮ ತಂದೆಗೆ ಶಕ್ತಿಮೀರಿ ಸೇವೆಸಲ್ಲಿಸಿದ್ದೇನೆ.</verse>
				<verse number="7">ನಿಮ್ಮ ತಂದೆಯಾದರೋ ನನಗೆ ಮೋಸಮಾಡಿ ಹತ್ತು ಸಾರಿ ನನ್ನ ಸಂಬಳವನ್ನು ಬದಲಾಯಿಸಿದ್ದಾರೆ. ಅವರಿಂದ ನನಗೆ ಕೇಡಾಗದಂತೆ ದೇವರೇ ನೋಡಿಕೊಂಡರು.</verse>
				<verse number="8">‘ಚುಕ್ಕೆಯುಳ್ಳವುಗಳನ್ನು ಮಾತ್ರ ನಿನ್ನ ಸಂಬಳಕ್ಕೆ ತೆಗೆದುಕೊ’, ಎಂದು ನಿಮ್ಮ ತಂದೆ ಹೇಳುವಾಗ ಹಿಂಡಿನ ಆಡುಕುರಿಗಳೆಲ್ಲ ಚುಕ್ಕೆಯುಳ್ಳ ಮರಿಗಳನ್ನೇ ಈದುವು. ‘ರೇಖೆಗಳಿರುವುವುಗಳನ್ನು ಮಾತ್ರ ಸಂಬಳಕ್ಕೆ ತೆಗೆದುಕೊ’, ಎಂದು ಹೇಳಿದಾಗ ಆಡುಕುರಿಗಳೆಲ್ಲವು ರೇಖೆಯುಳ್ಳ ಮರಿಗಳನ್ನೇ ಈದುವು.</verse>
				<verse number="9">ಹೀಗೆ ದೇವರು ನಿಮ್ಮ ತಂದೆಯ ಆಡುಕುರಿಗಳನ್ನು ತೆಗೆದು ನನಗೆ ಕೊಟ್ಟರು.</verse>
				<verse number="10">“ಆಡುಕುರಿಗಳು ಸಂಗಮ ಮಾಡುವ ಕಾಲದಲ್ಲಿ ನಾನೊಂದು ಕನಸನ್ನು ಕಂಡೆ. ಅದರಲ್ಲಿ ಕಣ್ಣೆತ್ತಿ ನೋಡುತ್ತಿದ್ದ ನನಗೆ ಮೇಕೆಗಳ ಮೇಲೆ ಹಾರಿದ ಹೋತಗಳೆಲ್ಲವು ರೇಖೆ, ಚುಕ್ಕೆ, ಮಚ್ಚೆಗಳುಳ್ಳವುಗಳಾಗಿಯೆ ಕಾಣಿಸಿದವು.</verse>
				<verse number="11">ಆ ಕನಸಿನಲ್ಲಿ ದೇವದೂತನು, ‘ಯಕೋಬನೇ’ ಎಂದು ಕರೆದನು. ನಾನು, ‘ಇಗೋ, ಇದ್ದೇನೆ’, ಎಂದು ಹೇಳಿದೆ.</verse>
				<verse number="12">ಆತ ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ. ಆದುದರಿಂದಲೇ ಮೇಕೆಗಳ ಮೇಲೆ ಹಾರುವ ಹೋತಗಳೆಲ್ಲವು ರೇಖೆ, ಚುಕ್ಕೆ, ಮಚ್ಚೆಗಳುಳ್ಳವುಗಳಾಗಿವೆ, ಕಣ್ಣೆತ್ತಿನೋಡು.</verse>
				<verse number="13">ಬೇತೇಲಿನಲ್ಲಿ ನಿನಗೆ ಕಾಣಿಸಿದ ದೇವರು ನಾನೇ, ಅಲ್ಲಿ ನೀನು ಕಲ್ಲಿನ ಮೇಲೆ ಎಣ್ಣೆ ಹೊಯ್ದು ಅಭ್ಯಂಗಿಸಿ, ನನಗೆ ಹರಕೆ ಮಾಡಿಕೊಂಡೆಯಲ್ಲವೆ? ಈಗ ಎದ್ದು ಈ ನಾಡನ್ನು ಬಿಟ್ಟು ನೀನು ಹುಟ್ಟಿದ ನಾಡಿಗೆ ಹಿಂದಿರುಗಿ ಹೋಗು’ ಎಂದು ತಿಳಿಸಿದನು,” ಎಂದನು.</verse>
				<verse number="14">ಅದಕ್ಕೆ ರಾಖೇಲಳು ಮತ್ತು ಲೇಯಳು, “ನಮ್ಮ ತಂದೆಯ ಮನೆಯಲ್ಲಿ ಇನ್ನು ನಮಗೆ ಪಾಲಾಗಲಿ, ಹಕ್ಕುಬಾಧ್ಯತೆಯಾಗಲಿ ಏನಿದೆ?</verse>
				<verse number="15">ಅವರು ನಮ್ಮನ್ನು ಅನ್ಯರೆಂದೇ ಎಣಿಸುತ್ತಾರೆ; ನಮ್ಮನ್ನು ಮಾರಿ, ನಮ್ಮ ಮೂಲಕ ದೊರಕಿದ ಹಣವನ್ನು ಅವರೇ ನುಂಗಿಬಿಟ್ಟಿದ್ದಾರೆ.</verse>
				<verse number="16">ದೇವರು ನಮ್ಮ ತಂದೆಯಿಂದ ಕಿತ್ತುಕೊಂಡ ಈ ಆಸ್ತಿಯೆಲ್ಲ ನಮ್ಮದಾಗಿದೆ, ನಮ್ಮ ಮಕ್ಕಳದಾಗಿದೆ. ಆದುದರಿಂದ ದೇವರು ನಿಮಗೆ ಹೇಳದಂತೆಯೇ ಮಾಡಿ,” ಎಂದು ಉತ್ತರಕೊಟ್ಟರು.</verse>
				<verse number="17">ಅಂತೆಯೇ ಯಕೋಬನು ತನ್ನ ಮಕ್ಕಳನ್ನೂ ಹೆಂಡತಿಯರನ್ನೂ ಒಂಟೆಗಳ ಮೇಲೆ ಹತ್ತಿಸಿ ಹೊರಡಲು ಅಣಿಯಾದನು.</verse>
				<verse number="18">ಮೆಸಪೊಟೇಮಿಯಾದಲ್ಲಿ ತಾನು ಗಳಿಸಿಕೊಂಡಿದ್ದ ಆಸ್ತಿಯನ್ನೆಲ್ಲ ತೆಗೆದುಕೊಂಡು, ಜಾನುವಾರುಗಳನ್ನೆಲ್ಲ ಅಟ್ಟಿಕೊಂಡು ಕಾನಾನ್ ನಾಡಿಗೆ, ತನ್ನ ತಂದೆ ಇಸಾಕನ ಬಳಿಗೆ ಹೊರಟನು.</verse>
				<verse number="19">ಇತ್ತ ಲಾಬಾನನು ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸಲು ಹೋಗಿದ್ದನು. ಅದೇ ಸಮಯದಲ್ಲಿ ರಾಖೇಲಳು ತನ್ನ ತಂದೆಯ ಮನೆಯಲ್ಲಿದ್ದ ಕುಲದೈವಗಳ ವಿಗ್ರಹಗಳನ್ನು ಕದ್ದುಕೊಂಡಳು.</verse>
				<verse number="20">ಯಕೋಬನೂ ಆರಾಮ್ಯನಾದ ಆ ಲಾಬಾನನಿಗೆ ತಾನು ಹೋಗುತ್ತಾ ಇದ್ದೇನೆಂದು ತಿಳಿಸದೆ ವಂಚಿಸಿ ಓಡಿಹೋದನು.</verse>
				<verse number="21">ಹೀಗೆ ಅವನು ತನ್ನ ಆಸ್ತಿಪಾಸ್ತಿಯೊಂದಿಗೆ ಓಡಿಹೋಗಿ ಯೂಫ್ರೆಟಿಸ್ ಮಹಾನದಿಯನ್ನು ದಾಟಿ ಗಿಲ್ಯಾದ್‍ ಎಂಬ ಗುಡ್ಡಗಾಡಿನ ದಾರಿಯನ್ನು ಹಿಡಿದನು.</verse>
				<verse number="22">ಯಕೋಬನು ಓಡಿಹೋದ ಸುದ್ದಿ ಲಾಬಾನನಿಗೆ ಮೂರನೆಯ ದಿನ ತಿಳಿಯಿತು.</verse>
				<verse number="23">ಅವನು ಕೂಡಲೆ ತನ್ನ ಬಂಧುಬಳಗದವರನ್ನು ಕರೆದುಕೊಂಡು, ಏಳು ದಿನ ಪ್ರಯಾಣಮಾಡಿ ಯಕೋಬನನ್ನು ಹಿಂದಟ್ಟಿ ಗಿಲ್ಯಾದ್ ಗುಡ್ಡಗಾಡಿನಲ್ಲಿ ಸಂಧಿಸಿದನು.</verse>
				<verse number="24">ಆ ರಾತ್ರಿಯಲ್ಲಿ ದೇವರು ಆರಾಮ್ಯನಾದ ಲಾಬಾನನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಎಚ್ಚರಿಕೆ, ಯಕೋಬನಿಗೆ ನೀನು ಯಾವ ಬೆದರಿಕೆಯನ್ನೂ ಹಾಕಬೇಡ!” ಎಂದು ಇದ್ದರು.</verse>
				<verse number="25">ಲಾಬಾನನು, ಯಕೋಬನನ್ನು ಎದುರುಗೊಂಡಾಗ ಯಕೋಬನು ಬೆಟ್ಟದಲ್ಲಿ ಗುಡಾರವನ್ನು ಹಾಕಿಸಿಕೊಂಡಿದ್ದನು. ಲಾಬಾನನು ಕೂಡ ತನ್ನವರೊಡನೆ ಅದೇ ಗಿಲ್ಯಾದ್ ಬೆಟ್ಟದಲ್ಲಿ ಗುಡಾರ ಹಾಕಿಸಿದನು.</verse>
				<verse number="26">ಲಾಬಾನನು ಯಕೋಬನಿಗೆ, “ನೀನು ಹೀಗೆ ಮಾಡಬಹುದೆ? ನನ್ನ ಹೆಣ್ಣು ಮಕ್ಕಳನ್ನು ಯುದ್ಧದಲ್ಲಿ ಸೆರೆಹಿಡಿದ ಕೈದಿಗಳಂತೆ ಎಳೆದುಕೊಂಡು ಓಡಿಬಂದಿರುವೆಯಲ್ಲಾ;</verse>
				<verse number="27">ನನಗೆ ಏನೂ ಹೇಳದೆ ವಂಚಿಸಿ ಏಕೆ ಓಡಿಬಂದೆ? ನನಗೆ ತಿಳಿಸಿದ್ದರೆ ಸಂಗೀತ ಸಂಭ್ರಮದೊಂದಿಗೆ, ತಾಳಮೇಳ ವಾದ್ಯಗಳೊಂದಿಗೆ ನಿನ್ನನ್ನು ಸಾಗಕಳುಹಿಸುತ್ತಿದ್ದೆ.</verse>
				<verse number="28">ನನ್ನ ಹೆಣ್ಣು ಮಕ್ಕಳಿಗೂ ಮೊಮ್ಮಕ್ಕಳಿಗೂ ಮುದ್ದಿಟ್ಟು ಬೀಳ್ಕೊಡಲೂ ಆಗದಂತೆ ಮಾಡಿದೆ. ನೀನು ಮಾಡಿದ್ದು ಎಂಥ ಹುಚ್ಚು ಕೆಲಸ.</verse>
				<verse number="29">ನಿಮಗೆ ಹಾನಿಮಾಡುವ ಸಾಮರ್ಥ್ಯ ನನಗಿದೆ. ಆದರೆ ಕಳೆದ ರಾತ್ರಿ ನಿಮ್ಮ ತಂದೆಯ ದೇವರು, “ಯಕೋಬನಿಗೆ ಯಾವ ಬೆದರಿಕೆಯನ್ನೂ ಹಾಕಬೇಡ, ಎಚ್ಚರಿಕೆ!” ಎಂದು ತಿಳಿಸಿದರು.</verse>
				<verse number="30">ತಂದೆಯ ಮನೆಗೆ ಹಿಂದಿರುಗುವ ಅಭಿಲಾಶೆಯಿಂದ ನೀನು ಹೀಗೆ ಬಂದು ಬಿಟ್ಟಿದ್ದೇನೋ ಸರಿ. ಆದರೆ ನನ್ನ ಕುಲದೇವರುಗಳನ್ನು ಕದ್ದದ್ದು ಏಕೆ?” ಎಂದು ಕೇಳಿದನು.</verse>
				<verse number="31">ಅದಕ್ಕೆ ಪ್ರತ್ಯುತ್ತರವಾಗಿ ಯಕೋಬನು, “ನೀವು ನಿಮ್ಮ ಹೆಣ್ಣು ಮಕ್ಕಳನ್ನು ಬಲಾತ್ಕಾರದಿಂದ ಕಿತ್ತುಕೊಳ್ಳುವಿರಿ ಎಂದು ಭಯಪಟ್ಟು ಹೀಗೆ ಹೊರಟು ಬಂದೆ.</verse>
				<verse number="32">ಆದರೆ ನಿಮ್ಮ ಕುಲದೇವರುಗಳ ವಿಗ್ರಹಗಳು ಯಾರ ಬಳಿಯಲ್ಲಿ ಸಿಕ್ಕುತ್ತವೆಯೋ ಅವನು ಸಾಯಲಿ, ನಮ್ಮ ಬಂಧುಬಳಗದವರ ಎದುರಿನಲ್ಲೇ ನನ್ನ ಸೊತ್ತನ್ನು ಪರೀಕ್ಷಿಸಬಹುದು. ಅದರಲ್ಲಿ ನಿಮ್ಮದೇನಾದರೂ ಸಿಕ್ಕಿದರೆ ಅದನ್ನು ತೆಗೆದುಕೊಳ್ಳಬಹುದು,” ಎಂದು ಹೇಳಿದನು. ಆ ಕುಲದೇವರುಗಳ ವಿಗ್ರಹಗಳನ್ನು ಕದ್ದವಳು ರಾಖೇಲಳೆಂದು ಯಕೋಬನಿಗೆ ತಿಳಿದಿರಲಿಲ್ಲ.</verse>
				<verse number="33">ಲಾಬಾನನು ಯಕೋಬನ ಗುಡಾರದಲ್ಲೂ, ಲೇಯಳ ಗುಡಾರದಲ್ಲೂ ಹಾಗು ಆ ಇಬ್ಬರು ದಾಸಿಯರ ಗುಡಾರದಲ್ಲೂ ಹುಡುಕಿದನು. ಏನೂ ಸಿಕ್ಕಲಿಲ್ಲ. ಲೇಯಳ ಗುಡಾರವನ್ನು ಬಿಟ್ಟು ರಾಖೇಲಳ ಗುಡಾರಕ್ಕೆ ಬಂದನು.</verse>
				<verse number="34">ರಾಖೇಲಳು ಆ ವಿಗ್ರಹಗಳನ್ನು ತೆಗೆದುಕೊಂಡು ಒಂಟೆಯ ಸಬರದೊಳಗಿಟ್ಟು, ಅವುಗಳ ಮೇಲೆ ಕುಳಿತಿದ್ದಳು. ಲಾಬಾನನು ಗುಡಾರದಲ್ಲಿದ್ದ ಸಾಮಾನುಗಳನ್ನೆಲ್ಲ ಮುಟ್ಟಿ ಮುಟ್ಟಿ ನೋಡಿದನು. ವಿಗ್ರಹಗಳು ಕಾಣಲಿಲ್ಲ.</verse>
				<verse number="35">ರಾಖೇಲಳು ತನ್ನ ತಂದೆಗೆ, “ಅಪ್ಪಾ, ನಾನು ನಿಮ್ಮ ಮುಂದೆ ಎದ್ದು ನಿಂತುಕೊಳ್ಳಲಾಗದೆ ಇದ್ದೇನೆ, ಕೋಪಿಸಿಕೊಳ್ಳಬೇಡಿ, ನಾನು ಮುಟ್ಟಾಗಿದ್ದೇನೆ,” ಎಂದು ಹೇಳಿದಳು. ಎಂದೇ ಲಾಬಾನನು ಎಷ್ಟು ಹುಡುಕಿ ನೋಡಿದರೂ ಆ ವಿಗ್ರಹಗಳನ್ನು ಕಂಡುಹಿಡಿಯಲಾಗಲಿಲ್ಲ.</verse>
				<verse number="36">ಆಗ ಯಕೋಬನಿಗೆ ಸಿಟ್ಟು ಬಂದಿತು, ಅವನು ಲಾಬಾನನೊಡನೆ ಹೀಗೆಂದು ವಾಗ್ವಾದ ಮಾಡಿದನು - “ನೀವು ಇಷ್ಟು ಆತುರಪಟ್ಟು ನನ್ನನ್ನು ಹಿಂದಟ್ಟಿ ಬರಲು ನಾನು ಮಾಡಿದ ತಪ್ಪೇನು?</verse>
				<verse number="37">ನಾನು ಮಾಡಿದ ದ್ರೋಹವಾದರೂ ಏನು? ನೀವು ನನ್ನ ಸಾಮಾನುಗಳನ್ನೆಲ್ಲಾ ಪರೀಕ್ಷಿಸಿ ನೋಡಿದ್ದಾಯಿತು; ನಿಮ್ಮ ಸೊತ್ತೇನಾದರೂ ಸಿಕ್ಕಿದೆಯೇ? ಸಿಕ್ಕಿದ್ದರೆ ನನ್ನವರ ಮುಂದೆಯೂ ನಿಮ್ಮವರ ಮುಂದೆಯೂ ತಂದಿಡಿ, ನೋಡೋಣ. ಅವರೇ ನಮ್ಮಿಬ್ಬರ ನ್ಯಾಯವನ್ನು ತೀರಿಸಲಿ.</verse>
				<verse number="38">ಇದಕ್ಕಾಗಿಯೇ ನಾನು ಇಪ್ಪತ್ತು ವರ್ಷ ನಿಮ್ಮ ಬಳಿ ಇದ್ದುದು? ನಿಮ್ಮ ಆಡುಕುರಿಗಳು ಕಂದು ಹಾಕಲಿಲ್ಲ; ನಿಮ್ಮ ಹಿಂಡಿನ ಟಗರುಗಳನ್ನು ನಾನೇನೂ ತಿಂದುಬಿಡಲಿಲ್ಲ;</verse>
				<verse number="39">ಕಾಡುಮೃಗಗಳು ಕೊಂದ ಆಡುಕುರಿಗಳ ಅಳಿದುಳಿಕೆಗಳನ್ನು ನಿಮಗೆ ತಂದುತೋರಿಸದೆ, ನಾನೇ ಈಡು ತೆತ್ತಿದ್ದೇನೆ. ಹಗಲಲ್ಲಾಗಲಿ ರಾತ್ರಿಯಲ್ಲಾಗಲಿ ಕದ್ದುಹೋದ ಜಾನುವಾರುಗಳಿಗೆ ಪರಿಹಾರವನ್ನು ನನ್ನ ಕೈಯಿಂದಲೆ ಕಿತ್ತುಕೊಂಡಿದ್ದೀರಿ.</verse>
				<verse number="40">ಹಗಲಿನ ಬೇಗೆಯಿಂದಲೂ ಇರುಳಿನ ಚಳಿಯಿಂದಲೂ ಕರಗಿಹೋಗಿದ್ದೆ; ಕಣ್ಣುಗಳಿಗೆ ನಿದ್ರೆ ದೂರವಾಗಿತ್ತು.</verse>
				<verse number="41">ಇಂಥ ಪರಿಸ್ಥಿತಿಯಲ್ಲೂ ಇಪ್ಪತ್ತು ವರ್ಷ ನಿಮ್ಮ ಮನೆಯಲ್ಲಿದ್ದು ನಿಮ್ಮಿಬ್ಬರ ಹೆಣ್ಣು ಮಕ್ಕಳಿಗಾಗಿ ಹದಿನಾಲ್ಕು ವರ್ಷ ಹಾಗೂ ನಿಮ್ಮ ಆಡುಕುರಿಗಳಿಗಾಗಿ ಆರು ವರ್ಷ ದುಡಿದಿದ್ದೇನೆ. ಹೀಗಿದ್ದರೂ ಹತ್ತು ಸಾರಿ ನೀವು ನನ್ನ ಸಂಬಳವನ್ನು ಬದಲಾಯಿಸಿದಿರಿ.</verse>
				<verse number="42">ನನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ಆಗಿರುವಂಥವರು ನನ್ನ ಕಡೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀವು ನನ್ನನ್ನು ಬರಿಗೈಯಾಗಿ ಕಳುಹಿಸುತ್ತಿದ್ದಿರಿ. ದೇವರು ನನ್ನ ಕಷ್ಟದುಃಖವನ್ನೂ ನಾನು ಪಟ್ಟ ಪ್ರಯಾಸವನ್ನೂ ಗಮನಿಸಿದ್ದಾರೆ. ಆದ್ದರಿಂದಲೇ ನಿನ್ನೆಯ ರಾತ್ರಿ ನಿಮಗೆ ಎಚ್ಚರಿಕೆ ನೀಡಿದ್ದಾರೆ,” ಎಂದನು.</verse>
				<verse number="43">ಆಗ ಲಾಬಾನನು ಯಕೋಬನಿಗೆ, “ಈ ಮಹಿಳೆಯರು ನನ್ನ ಪುತ್ರಿಯರು, ಈ ಮಕ್ಕಳು ನನ್ನ ಮೊಮ್ಮಕ್ಕಳು, ಈ ಹಿಂಡುಗಳು ನನಗೆ ಸೇರಿದವು; ನಿನ್ನ ಕಣ್ಮುಂದೆ ಇರುವುದೆಲ್ಲವೂ ನನ್ನವೇ. ಇಂತಿರುವಲ್ಲಿ ಈ ನನ್ನ ಪುತ್ರಿಯರಿಗೇ ಆಗಲಿ, ಇವರು ಹೆತ್ತ ಮಕ್ಕಳಿಗೇ ಆಗಲಿ, ನಾನೀಗ ಏನೂ ಹಾನಿ ಮಾಡಹೋಗುವುದಿಲ್ಲ.</verse>
				<verse number="44">ಬಾ, ನಾನೂ ನೀನೂ ಒಂದು ಒಪ್ಪಂದ ಮಾಡಿಕೊಳ್ಳೋಣ; ಅದು ನನಗೂ ನಿನಗೂ ಸಾಕ್ಷಿಯಾಗಿರಲಿ,” ಎಂದು ಹೇಳಿದನು.</verse>
				<verse number="45">ಆಗ ಯಕೋಬನು ಒಂದು ಕಲ್ಲನ್ನು ತೆಗೆದುಕೊಂಡು ಸ್ಮಾರಕಸ್ತಂಭವಾಗಿ ನಿಲ್ಲಿಸಿದನು.</verse>
				<verse number="46">ಅದಲ್ಲದೆ, ತನ್ನ ಕಡೆಯವರಿಗೆ, “ಕಲ್ಲುಗಳನ್ನು ಒಟ್ಟುಗೂಡಿಸಿರಿ,” ಎನ್ನಲು, ಅವರು ಕಲ್ಲುಗಳನ್ನು ತಂದು ಒಂದು ಕುಪ್ಪೆ ಮಾಡಿದರು; ಅದರ ಬಳಿಯಲ್ಲೆ ಕುಳಿತು ಸಹಭೋಜನ ಮಾಡಿದರು.</verse>
				<verse number="47">ಆ ಕುಪ್ಪೆಗೆ ಲಾಬಾನನು ‘ಯಗರಸಾಹದೂತ’ ಎಂದೂ ಯಕೋಬನು ‘ಗೆಲೇದ್’ ಎಂದೂ ಹೆಸರಿಟ್ಟರು.</verse>
				<verse number="48">ಲಾಬಾನನು ಯಕೋಬನಿಗೆ, “ಈ ದಿನ ನಿನಗೂ ನನಗೂ ಆದ ಒಪ್ಪಂದಕ್ಕೆ ಈ ಕುಪ್ಪೆಯೇ ಸಾಕ್ಷಿ” ಎಂದು ಹೇಳಿದ ಕಾರಣ ಅದಕ್ಕೆ ‘ಗೆಲೇದ್’ ಎಂದು ಹೆಸರಾಯಿತು.</verse>
				<verse number="49">ಅಂತೆಯೇ ಲಾಬಾನನು, “ನಾವು ಒಬ್ಬರನ್ನೊಬ್ಬರು ಬಿಟ್ಟು ಅಗಲಿದಾಗಲು ಸರ್ವೇಶ್ವರ ನಮ್ಮಿಬ್ಬರನ್ನೂ ನೋಡಿಕೊಳ್ಳುತ್ತಾ ಇರಲಿ” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ‘ಮಿಚ್ಪಾ’ ಎಂದು ಹೆಸರಾಯಿತು.</verse>
				<verse number="50">ಲಾಬಾನನು ಮುಂದುವರೆದು, “ನೀನು ನನ್ನ ಹೆಣ್ಣು ಮಕ್ಕಳನ್ನು ನೋಯಿಸಿದರೆ ಅಥವಾ ಬೇರೆ ಹೆಣ್ಣುಗಳನ್ನು ಮದುವೆ ಮಾಡಿಕೊಂಡರೆ ವಿಚಾರಿಸುವವರು ನಮ್ಮಲ್ಲಿ ಯಾರು ಇಲ್ಲದಿದ್ದರೂ ದೇವರೇ ನಮ್ಮ ಒಪ್ಪಂದಕ್ಕೆ ಸಾಕ್ಷಿಯೆಂಬುದನ್ನು ಮರೆಯಬೇಡ,” ಎಂದನು.</verse>
				<verse number="51">ಅವನು ಮತ್ತೆ ಯಕೋಬನಿಗೆ, \ಇಗೋ, ನೋಡು ನನಗೂ ನಿನಗೂ ನಡುವೆ ನಿಂತಿರುವ ಕುಪ್ಪೆ ಮತ್ತು ಸ್ಮಾರಕಸ್ತಂಭ.</verse>
				<verse number="52">ಕೇಡು ಮಾಡುವ ಉದ್ದೇಶದಿಂದ ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಬಳಿಗೆ ಬರಕೂಡದು. ಹಾಗೆಯೇ ನೀನು ಈ ಕುಪ್ಪೆಯನ್ನಾಗಲಿ ಸ್ತಂಭವನ್ನಾಗಲಿ ದಾಟಿ ನನ್ನ ಬಳಿಗೆ ಬರಕೂಡದು, ಇದಕ್ಕೆ ಈ ಕುಪ್ಪೆ ಹಾಗೂ ಈ ಸ್ತಂಭವೇ ಸಾಕ್ಷಿ.</verse>
				<verse number="53">ಅಬ್ರಹಾಮನ ದೇವರು. ನಾಹೋರನ ದೇವರು, ಅವರ ತಂದೆಗಳ ದೇವರು ನಿನಗೂ ನನಗೂ ನ್ಯಾಯ ತೀರಿಸಲಿ,” ಎಂದನು. ಅದೇ ಮೇರೆಗೆ ಯಕೋಬನು, ತನ್ನ ತಂದೆಯಾದ ಇಸಾಕನು ಭಯಭಕ್ತಿಯಿಂದ ಆರಾಧಿಸುವ ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದನು.</verse>
				<verse number="54">ಅಲ್ಲದೆ, ಯಕೋಬನು ಆ ಬೆಟ್ಟದ ಮೇಲೆ ಬಲಿಯನ್ನರ್ಪಿಸಿ ಬಂಧುಗಳನ್ನು ತನ್ನೊಡನೆ ಸಹಭೋಜನಕ್ಕೆ ಕರೆಸಿದನು. ಅವರು ಸಹಭೋಜನ ಮಾಡಿ ಆ ರಾತ್ರಿಯೆಲ್ಲಾ ಬೆಟ್ಟದ ಮೇಲಿದ್ದರು.</verse>
				<verse number="55">ಬೆಳಿಗ್ಗೆ ಲಾಬಾನನು ಎದ್ದು, ತನ್ನ ಪುತ್ರಿಯರಿಗೂ ಮೊಮ್ಮಕ್ಕಳಿಗೂ ಮುದ್ದಿಟ್ಟು, ಆಶೀರ್ವದಿಸಿ, ತನ್ನ ಊರಿಗೆ ಹೊರಟುಹೋದನು.</verse>
			</chapter>
			<chapter number="32">
				<verse number="1">ಇತ್ತ ಯಕೋಬನು ತನ್ನ ಪ್ರಯಾಣವನ್ನು ಮುಂದುವರೆಸಿದನು.</verse>
				<verse number="2">ದೇವದೂತರು ಅವನೆದುರಿಗೆ ಬಂದರು. ಯಕೋಬನು ಅವರನ್ನು ನೋಡಿ, “ಇದು ದೇವರ ಪಾಳೆಯ,” ಏಂದು ಹೇಳಿ ಆ ಸ್ಥಳಕ್ಕೆ ‘ಮಹನಯಿಮ್’ ಎಂದು ಹೆಸರಿಟ್ಟನು.</verse>
				<verse number="3">ಬಳಿಕ ಯಕೋಬನು ಎದೋಮ್ಯರ ನಾಡಿನ ‘ಸೇಯೀರ್’ ಎಂಬಲ್ಲಿ ವಾಸವಾಗಿದ್ದ ತನ್ನ ಅಣ್ಣ ಏಸಾವನ ಬಳಿಗೆ ಮುಂದಾಳುಗಳನ್ನು ಕಳಿಸಿದನು.</verse>
				<verse number="4">ಕಳುಹಿಸುವಾಗ ಅವರಿಗೆ, “ನೀವು ನನ್ನೊಡೆಯ ಏಸಾವನ ಬಳಿಗೆ ಹೋಗಿ ಈ ಸಮಾಚಾರವನ್ನು ಕೊಡಿ: ‘ನಿಮ್ಮ ದಾಸ ಯಕೋಬನಾದ ನಾನು ಇಷ್ಟು ದಿನ ಲಾಬಾನನ ಬಳಿ ವಾಸಮಾಡಬೇಕಾಗಿ ಬಂದಿತು.</verse>
				<verse number="5">ನನಗೆ ಎತ್ತು - ಕತ್ತೆ, ಆಡು - ಕುರಿ, ದಾಸ - ದಾಸಿಯರು ಇದ್ದಾರೆ. ನನ್ನೊಡೆಯರಾದ ನೀವು ನನ್ನ ಬಗ್ಗೆ ದಯದಾಕ್ಷಿಣ್ಯವುಳ್ಳವರಾಗಿರಬೇಕೆಂಬ ಕೋರಿಕೆಯಿಂದ ನಮ್ಮನ್ನು ನಿಮ್ಮ ಬಳಿಗೆ ಕಳಿಸಿದ್ದಾರೆ' ಎಂದು ತಿಳಿಸಿರಿ” ಎಂದನು.</verse>
				<verse number="6">ಆ ಆಳುಗಳು ಹೋಗಿ ಯಕೋಬನ ಬಳಿಗೆ ಹಿಂದಿರುಗಿ ಬಂದು, “ನಾವು ನಿಮ್ಮ ಅಣ್ಣ ಏಸಾವನ ಬಳಿಗೆ ಹೋಗಿದ್ದೆವು. ಅವರು ನಾನೂರು ಜನರ ಸಮೇತ ನಿಮ್ಮನ್ನು ಎದುರುಗೊಳ್ಳಲು ಬರುತ್ತಿದ್ದಾರೆ,” ಎಂದು ತಿಳಿಸಿದರು.</verse>
				<verse number="7">ಆಗ ಯಕೋಬನು ಬಹಳ ದಿಗಿಲುಗೊಂಡನು, ಕಳವಳಗೊಂಡನು; ತನ್ನ ಜನರನ್ನೂ ಕುರಿ, ದನ, ಒಂಟೆಗಳನ್ನೂ ಎರಡು ಪರಿವಾರಗಳಾಗಿ ವಿಂಗಡಿಸಿದನು.</verse>
				<verse number="8">ಏಸಾವನು ಒಂದು ಪರಿವಾರದ ಮೇಲೆ ಬಿದ್ದರೆ ಇನ್ನೊಂದು ತಪ್ಪಿಸಿಕೊಳ್ಳಬಹುದೆಂಬುದು ಅವನ ಯೋಚನೆಯಾಗಿತ್ತು.</verse>
				<verse number="9">ಇದಲ್ಲದೆ ಯಕೋಬನು ದೇವರನ್ನು ಹೀಗೆಂದು ಪ್ರಾರ್ಥಿಸಿದನು: “ಸ್ವಾಮಿ ಸರ್ವೇಶ್ವರಾ, ನನ್ನ ತಂದೆ ತಾತಂದಿರಾದ ಇಸಾಕ, ಅಬ್ರಹಾಮರ ದೇವರೇ, ಸ್ವಂತ ನಾಡಿಗೆ, ಬಂಧುಬಳಗದವರ ಬಳಿಗೆ ಹಿಂದಿರುಗಬೇಕೆಂದು ನನಗೆ ನೀವೇ ಆಜ್ಞಾಪಿಸಿದಿರಿ: 'ನಿನಗೆ ಒಳ್ಳೆಯದನ್ನೇ ಮಾಡುತ್ತೇನೆ' ಎಂದು ವಾಗ್ದಾನ ಮಾಡಿದವರು ನೀವೇ ಅಲ್ಲವೆ?</verse>
				<verse number="10">ದಾಸನಾದ ನನ್ನ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ನಿಮ್ಮ ವಾಗ್ದಾನವನ್ನು ನೆರವೇರಿಸಿದ್ದೀರಿ. ನಾನು ಅದಕ್ಕೆ ಕೇವಲ ಅಪಾತ್ರನು. ನಾನು ಮೊದಲು ಈ ಜೋರ್ಡನ್ ನದಿಯನ್ನು ದಾಟಿದಾಗ ನನಗಿದ್ದುದು ಒಂದು ಊರುಗೋಲು ಮಾತ್ರ. ಈಗ ಎರಡು ಪರಿವಾರಗಳಿಗೆ ಒಡೆಯನಾಗಿದ್ದೇನೆ.</verse>
				<verse number="11">ನನ್ನ ಅಣ್ಣ ಏಸಾವನು ಬಂದು ನನ್ನನ್ನೂ ನನ್ನ ಮಕ್ಕಳನ್ನೂ ಅವರ ತಾಯಂದಿರನ್ನೂ ಕೊಲ್ಲುವನೋ ಏನೋ ಎಂಬ ಭಯ ನನಗಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.</verse>
				<verse number="12">ನಿನಗೆ ಒಳ್ಳೆಯದನ್ನೇ ಮಾಡಿ ನಿನ್ನ ಸಂತತಿಯನ್ನು ಎಣಿಸಲಾಗದ ಕಡಲತೀರದ ಮರಳಿನಂತೆ ಹೆಚ್ಚಿಸುವೆನು, ಎಂದು ಹೇಳಿದವರು ನೀವೇ ಅಲ್ಲವೇ?”</verse>
				<verse number="13">ಯಕೋಬನು ಆ ರಾತ್ರಿಯನ್ನು ಅಲ್ಲೇ ಕಳೆದನು. ಇನ್ನೂರು ಆಡು, ಇಪ್ಪತ್ತು ಹೋತ, ಇನ್ನೂರು ಕುರಿ, ಇಪ್ಪತ್ತು ಟಗರು, ಹಾಲು ಕರೆಯುವ ಮೂವತ್ತು ಒಂಟೆ ಮತ್ತು ಅವುಗಳ ಮರಿ, ನಲವತ್ತು ಆಕಳು, ಹತ್ತು ಹೋರಿ, ಇಪ್ಪತ್ತು ಹೆಣ್ಣುಕತ್ತೆ, ಹತ್ತು ಗಂಡುಕತ್ತೆ ಇವುಗಳನ್ನು ತನ್ನ ಅಣ್ಣ ಏಸಾವನಿಗೆ ಕಾಣಿಕೆಗಾಗಿ ತೆಗೆದುಕೊಂಡನು.</verse>
				<verse number="14"></verse>
				<verse number="15"></verse>
				<verse number="16">ಇವುಗಳನ್ನು ಹಿಂಡುಹಿಂಡಾಗಿ ವಿಂಗಡಿಸಿ ತನ್ನ ಆಳುಗಳ ವಶಕ್ಕೆ ಒಪ್ಪಿಸಿದನು. “ನೀವು ನನಗಿಂತ ಮುಂಚಿತವಾಗಿ ಹೋಗಿರಿ; ಹಿಂಡು ಹಿಂಡಿಗೂ ಮಧ್ಯೆ ಸ್ಥಳವಿರಲಿ,” ಎಂದು ಆ ಆಳುಗಳಿಗೆ ಹೇಳಿದನು.</verse>
				<verse number="17">ಮೊದಲನೆಯ ಹಿಂಡಿನ ಆಳಿಗೆ, “ನನ್ನ ಅಣ್ಣ ಏಸಾವನು ನಿನ್ನೆದುರಿಗೆ ಬಂದು, “ನೀನು ಯಾರ ಆಳು? ಎಲ್ಲಿಗೆ ಹೋಗುತ್ತಿರುವೆ? ನಿನ್ನ ಮುಂದೆ ಇರುವ ಇವೆಲ್ಲ ಯಾರವು?” ಎಂದು ಕೇಳಿದರೆ ನೀನು,</verse>
				<verse number="18">‘ಇವು ನಿಮ್ಮ ದಾಸ ಯಕೋಬನವು; ಒಡೆಯರಾದ ನಿಮಗೆ ಇವುಗಳನ್ನು ಕಾಣಿಕೆಯಾಗಿ ಕಳಿಸಿಕೊಟ್ಟಿದ್ದಾರೆ; ಅವರೂ ನಮ್ಮ ಹಿಂದೆ ಬರುತ್ತಿದ್ದಾರೆ’ ಎಂದು ಉತ್ತರಕೊಡಬೇಕು,” ಎಂಬುದಾಗಿ ಅಪ್ಪಣೆ ಕೊಟ್ಟನು.</verse>
				<verse number="19">ಹಾಗೆಯೇ ಎರಡನೆಯವನಿಗೂ ಮೂರನೆಯವನಿಗೂ ಹಿಂಡುಗಳ ಹಿಂದೆ ಹೋದವರೆಲ್ಲರಿಗೂ, “ನೀವು ಏಸಾವನನ್ನು ಕಾಣುವಾಗ ಇದೇ ರೀತಿಯಾಗಿ ಮಾತನಾಡಬೇಕು.</verse>
				<verse number="20">‘ನಿಮ್ಮ ದಾಸ ಯಕೋಬನು ನಮ್ಮ ಹಿಂದೆ ಬರುತ್ತಿದ್ದಾರೆ,’ ಎನ್ನಿರಿ” ಎಂದು ಆಜ್ಞಾಪಿಸಿದನು. ಯಕೋಬನು ತನ್ನೊಳಗೆ, “ನನಗೆ ಮುಂಚಿತವಾಗಿ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸಿದ ಮೇಲೆ ನಾನು ಅವನನ್ನು ಭೇಟಿ ಆಗುತ್ತೇನೆ. ಆಗ ಒಂದು ವೇಳೆ ನನ್ನನ್ನು ಪ್ರೀತಿಯಿಂದ ಅಂಗೀಕರಿಸುವನು,” ಎಂದುಕೊಂಡನು.</verse>
				<verse number="21">ಆದಕಾರಣ ಅವನು ಆ ಕಾಣಿಕೆಯನ್ನು ಮುಂಚಿತವಾಗಿ ಕಳಿಸಿ, ತಾನು ಆ ರಾತ್ರಿ ಆ ತನ್ನ ಪಾಳೆಯದೊಳಗೇ ಇದ್ದನು.</verse>
				<verse number="22">ಆ ರಾತ್ರಿ ಯಕೋಬನು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ಹನ್ನೊಂದು ಮಂದಿ ಮಕ್ಕಳನ್ನೂ ಕರೆದುಕೊಂಡು ‘ಯಬ್ಬೋಕ್’ ಹೊಳೆಯನ್ನು ದಾಟುವ ಸ್ಥಳದಲ್ಲಿ ದಾಟಿದನು.</verse>
				<verse number="23">ಅವರನ್ನೂ ತನ್ನ ಆಸ್ತಿಪಾಸ್ತಿಯನ್ನೂ ದಾಟಿಸಿದ ಮೇಲೆ</verse>
				<verse number="24">ಯಕೋಬನು ಒಂಟಿಗನಾಗಿ ಹಿಂದೆ ನಿಂತಿದ್ದನು, ಯಾರೋ ಒಬ್ಬ ಪುರುಷ ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.</verse>
				<verse number="25">ಆ ಪುರುಷ ತಾನು ಗೆಲ್ಲದೆ ಇರುವುದನ್ನು ಕಂಡು ಯಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಹೋರಾಡುತ್ತಿರುವಾಗಲೆ ಯಕೋಬನ ತೊಡೆಯ ಕೀಲು ತಪ್ಪಿತು.</verse>
				<verse number="26">ಆ ಪುರುಷ, “ನನ್ನನ್ನು, ಹೋಗಬಿಡು, ಬೆಳಗು ಆಗುತ್ತಿದೆ,” ಎನ್ನಲು ಯಕೋಬನು, “ನೀವು ನನ್ನನ್ನು ಆಶೀರ್ವದಿಸಿದ ಹೊರತು, ನಿಮ್ಮನ್ನು ಹೋಗಬಿಡುವುದಿಲ್ಲ,” ಎಂದನು.</verse>
				<verse number="27">ಆ ಪುರುಷ, “ನಿನ್ನ ಹೆಸರೇನು?” ಎಂದು ಕೇಳಿದ್ದಕ್ಕೆ ಯಕೋಬನು, “ನನ್ನ ಹೆಸರು ಯಕೋಬ” ಎಂದನು.</verse>
				<verse number="28">ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.</verse>
				<verse number="29">ಯಕೋಬನು, “ನಿಮ್ಮ ಹೆಸರನ್ನು ದಯವಿಟ್ಟು ನನಗೆ ತಿಳಿಸಬೇಕು,” ಎಂದಾಗ ಆ ಪುರುಷ, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲೇ ಅವನನ್ನು ಆಶೀರ್ವದಿಸಿದನು.</verse>
				<verse number="30">ಯಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ಕಂಡಿದ್ದರೂ ಪ್ರಾಣಸಹಿತ ಉಳಿದಿದ್ದೇನಲ್ಲಾ!” ಎಂದುಕೊಂಡು ಆ ಸ್ಥಳಕ್ಕೆ ‘ಪೆನೀಯೇಲ್’ ಎಂದು ಹೆಸರಿಟ್ಟನು.</verse>
				<verse number="31">ಅವನು ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯ ಆಯಿತು; ಕೀಲು ಕಳಚಿದ ತೊಡೆಯ ನಿಮಿತ್ತ ಅವನು ಕುಂಟುಕೊಂಡೇ ನಡೆದನು.</verse>
				<verse number="32">ಆ ಪುರುಷನು ಯಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರೆಯೇಲರು ಇಂದಿನವರೆಗೂ ತೊಡೆಯ ಕೀಲಿನ ಮೇಲಿರುವ ಮಾಂಸವನ್ನು ತಿನ್ನುವುದಿಲ್ಲ.</verse>
			</chapter>
			<chapter number="33">
				<verse number="1">ಯಕೋಬನು ಕಣ್ಣೆತ್ತಿ ನೋಡಿದಾಗ ಏಸಾವನು ನಾನೂರು ಮಂದಿ ಜನರ ಸಮೇತ ಬರುತ್ತಿದ್ದನು. ಕೂಡಲೆ ಅವನು ಲೇಯಳಿಗೂ ರಾಖೇಲಳಿಗೂ ಇಬ್ಬರು ದಾಸಿಯರಿಗೂ ಅವರವರ ಮಕ್ಕಳನ್ನು ಒಪ್ಪಿಸಿದನು.</verse>
				<verse number="2">ಅವರನ್ನು ಬೇರೆ ಬೇರೆ ಮಾಡಿ ಮುಂದುಗಡೆಯಲ್ಲಿ ದಾಸಿಯರನ್ನೂ ಅವರ ಮಕ್ಕಳನ್ನೂ, ಅವರ ಹಿಂದೆ ಲೇಯಳನ್ನೂ ಆಕೆಯ ಮಕ್ಕಳನ್ನೂ, ಕಡೆಯಲ್ಲಿ ರಾಖೇಲಳನ್ನೂ ಜೋಸೆಫನನ್ನೂ ನಿಲ್ಲಿಸಿದನು.</verse>
				<verse number="3">ತಾನೇ ಅವರ ಮುಂದಾಗಿ ನಡೆದನು. ತನ್ನ ಅಣ್ಣನನ್ನು ಸಮೀಪಿಸುತ್ತಿರುವಾಗ ಏಳು ಸಾರಿ ನೆಲದ ತನಕ ಬಗ್ಗಿ ನಮಸ್ಕರಿಸಿದನು.</verse>
				<verse number="4">ಆದರೆ ಏಸಾವನು ಅವನನ್ನು ಎದುರುಗೊಳ್ಳಲು ಓಡಿ ಬಂದು ಅವನ ಕೊರಳನ್ನು ಅಪ್ಪಿಕೊಂಡು ಮುದ್ದಿಟ್ಟನು.</verse>
				<verse number="5">ಅವರಿಬ್ಬರ ಕಣ್ಣಲ್ಲೂ ನೀರು ಹರಿಯಿತು. ಬಳಿಕ ಏಸಾವನು ಕಣ್ಣೆತ್ತಿ ಆ ಮಹಿಳೆಯರನ್ನೂ ಮಕ್ಕಳನ್ನೂ ನೋಡಿ, “ನಿನ್ನ ಜೊತೆಯಲ್ಲಿರುವ ಇವರು ಯಾರು?” ಎಂದು ವಿಚಾರಿಸಿದನು. ಯಕೋಬನು, “ದೇವರು ನಿಮ್ಮ ದಾಸನಾದ ನನಗೆ ಅನುಗ್ರಹಿಸಿದ ಮಕ್ಕಳು ಇವರೇ” ಎಂದು ಹೇಳಿದನು.</verse>
				<verse number="6">ಆಗ ಅವನ ದಾಸಿಯರಿಬ್ಬರೂ ತಮ್ಮ ಮಕ್ಕಳನ್ನು ಕರೆದುಕೊಂಡು ಹತ್ತಿರಕ್ಕೆ ಬಂದು ನಮಸ್ಕಾರ ಮಾಡಿದರು.</verse>
				<verse number="7">ಆಮೇಲೆ ಲೇಯಳು ತನ್ನ ಮಕ್ಕಳೊಡನೆ ಬಂದು ಅಡ್ಡಬಿದ್ದಳು; ಕಡೆಯಲ್ಲಿ ಜೋಸೆಫನೂ ರಾಖೇಲಳೂ ಬಂದು ಎರಗಿದರು.</verse>
				<verse number="8">ಏಸಾವನು, “ನಾನು ದಾರಿಯಲ್ಲಿ ಕಂಡ ಆ ಪರಿವಾರ ಏತಕ್ಕೆ?” ಎಂದು ಕೇಳಿದನು. ಯಕೋಬನು, “ಒಡೆಯನ ದಯೆ ನನಗೆ ದೊರಕಲೆಂದು ನಾನು ತಮಗೆ ಅದನ್ನು ಕಳಿಸಿಕೊಟ್ಟೆ,” ಎಂದನು.</verse>
				<verse number="9">ಏಸಾವನು, “ತಮ್ಮಾ, ನನಗೆ ಬೇಕಾದಷ್ಟು ಆಸ್ತಿಯುಂಟು; ನಿನ್ನದು ನಿನಗೇ ಇರಲಿ,” ಎಂದನು.</verse>
				<verse number="10">ಅದಕ್ಕೆ ಯಕೋಬನು, “ಇಲ್ಲ, ಹಾಗೆನ್ನಬಾರದು. ನಿಮಗೆ ನನ್ನ ಮೇಲೆ ದಯೆಯಿರುವುದು ನಿಜವಾಗಿದ್ದಲ್ಲಿ ನಾನು ಸಮರ್ಪಿಸುವ ಕಾಣಿಕೆಯನ್ನು ಅಂಗೀಕರಿಸಲೇಬೇಕು. ನಿಮ್ಮನ್ನು ನೋಡಿದ್ದು ದೇವರನ್ನು ನೋಡಿದ ಹಾಗಾಯಿತು. ನನ್ನನ್ನು ಪ್ರೀತಿಯಿಂದ ಸ್ವಾಗತಿಸಿದ್ದೇ ಸಾಕು.</verse>
				<verse number="11">ದೇವರ ಕೃಪೆಯಿಂದ ನನಗೆ ಬೇಕಾದುದೆಲ್ಲ ಇದೆ; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ತಾವು ದಯವಿಟ್ಟು ಅಂಗೀಕರಿಸಬೇಕು,” ಎಂದು ಹೇಳಿ ಒತ್ತಾಯಪಡಿಸಿದ್ದರಿಂದ ಏಸಾವನು ಆ ಕಾಣಿಕೆಯನ್ನು ತೆಗೆದುಕೊಂಡನು.</verse>
				<verse number="12">ತರುವಾಯ ಏಸಾವನು, “ಗುಡಾರಗಳನ್ನು ಬಿಟ್ಟು ಮುಂದಕ್ಕೆ ಪ್ರಯಾಣ ಬೆಳೆಸೋಣ; ನಾನೂ ನಿನ್ನ ಸಂಗಡ ಬರುತ್ತೇನೆ,” ಎಂದನು.</verse>
				<verse number="13">ಅದಕ್ಕೆ ಯಕೋಬನು, “ನನ್ನೊಡೆಯರಾದ ನಿಮಗೆ ತಿಳಿದಿರುವಂತೆ ನನ್ನ ಮಕ್ಕಳು ಎಳೆಯ ಪ್ರಾಯದವರು; ಈದಿರುವ ದನಕುರಿಗಳೂ ನನಗಿವೆ; ಒಂದೇ ದಿನ ಹೆಚ್ಚಾಗಿ ದಾರಿ ನಡೆಸಿದೆನಾದರೆ ಆಡುಕುರಿಗಳೆಲ್ಲವೂ ಸತ್ತುಹೋದಾವು.</verse>
				<verse number="14">ತಾವು ದಯವಿಟ್ಟು ದಾಸನಿಗಿಂತಲು ಮುಂಚೆ ಹೊರಡಬಹುದು, ನಾನು ನನ್ನ ಮುಂದಿರುವ ಆಡುಕುರಿಗಳ ಹಾಗೂ ಮಕ್ಕಳ ನಡಿಗೆಗೆ ತಕ್ಕ ಹಾಗೆ ಮೆಲ್ಲಮೆಲ್ಲನೆ ನಡೆದು ನನ್ನೊಡೆಯರ ನಾಡಾದ ಎದೋಮಿಗೆ ಬರುತ್ತೇನೆ,” ಎಂದನು</verse>
				<verse number="15">ಏಸಾವನು, “ಹಾಗಾದರೆ, ನನ್ನ ಆಳುಗಳಲ್ಲಿ ಕೆಲವರನ್ನು ನಿನ್ನ ಸಂಗಡ ಬಿಟ್ಟುಹೋಗುತ್ತೇನೆ,” ಎಂದನು. ಯಕೋಬನು, “ಏತಕ್ಕೆ, ಬೇಡಿ, ನನ್ನೊಡೆಯರ ದಯೆ ನನ್ನ ಮೇಲಿದ್ದರೆ ಸಾಕು,” ಎಂದು ಹೇಳಿದನು.</verse>
				<verse number="16">ಏಸಾವನು ಆ ದಿನವೇ ಎದೋಮ್ ನಾಡಿಗೆ ಹೊರಟುಹೋದನು.</verse>
				<verse number="17">ಇತ್ತ ಯಕೋಬನು ಪ್ರಯಾಣ ಬೆಳೆಸುತ್ತಾ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ಮಂದೆಗಳಿಗೋಸ್ಕರ ಕೊಟ್ಟಿಗೆಗಳನ್ನೂ ಕಟ್ಟಿಸಿದನು. ಈ ಕಾರಣ ಆ ಸ್ಥಳಕ್ಕೆ ‘ಸುಕ್ಕೋತ್’ ಎಂದು ಹೆಸರಾಯಿತು.</verse>
				<verse number="18">ಯಕೋಬನು ಮೆಸಪೊಟೇಮಿಯಾದಿಂದ ಹಿಂದಿರುಗಿ ಬಂದು ಕಾನಾನ್ ನಾಡಿನ ಶೆಕೆಮ್ ಪಟ್ಟಣಕ್ಕೆ ಸುರಕ್ಷಿತವಾಗಿ ಸೇರಿದನು. ಆ ಪಟ್ಟಣದ ಮುಂದೆಯೇ ತನ್ನ ಗುಡಾರಗಳನ್ನು ಹಾಕಿಸಿಕೊಂಡನು.</verse>
				<verse number="19">ಗುಡಾರ ಹಾಕಿಸಿದ ಭೂಮಿಯನ್ನು, ಶೆಕೆಮಿನ ತಂದೆಯಾದ ಹಮೋರನ ಮಕ್ಕಳಿಗೆ ನೂರು ವರಹಗಳನ್ನು ಕೊಟ್ಟು ಅವರಿಂದ ಕೊಂಡುಕೊಂಡನು.</verse>
				<verse number="20">ಅಲ್ಲೇ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ 'ಏಲ್ - ಏಲೋಹೆ - ಇಸ್ರಯೇಲ್’ ಎಂದು ಹೆಸರಿಟ್ಟನು.</verse>
			</chapter>
			<chapter number="34">
				<verse number="1">ಯಕೋಬನಿಗೆ ಲೇಯಳಲ್ಲಿ ಹುಟ್ಟಿದ ದೀನಳು ಒಂದು ದಿನ ಆ ನಾಡಿನ ಮಹಿಳೆಯರನ್ನು ನೋಡಲು ಹೊರಗೆ ಹೋಗಿ ಇದ್ದಳು.</verse>
				<verse number="2">ಹಿವ್ವಿಯನಾದ ಹಮೋರನ ಮಗನೂ ಆ ನಾಡಿಗೆ ಒಡೆಯನೂ ಆದ ಶೆಕೆಮನು ಆಕೆಯನ್ನು ನೋಡಿ, ಎತ್ತಿಕೊಂಡು ಹೋಗಿ, ಆಕೆಯನ್ನು ಜತೆಗೂಡಿ ಮಾನಭಂಗ ಮಾಡಿದನು.</verse>
				<verse number="3">ಅವನ ಮನಸ್ಸು ಯಕೋಬನ ಮಗಳಾದ ಆ ದೀನಳ ಮೇಲೆಯೇ ತಲ್ಲೀನಗೊಂಡಿತ್ತು. ಆಕೆಯನ್ನು ಮೋಹಿಸಿ ಅವಳ ಮನವೊಲಿಸುವಂಥ ಮಾತುಗಳನ್ನಾಡಿದನು.</verse>
				<verse number="4">ತನ್ನ ತಂದೆ ಹಮೋರನನ್ನು, “ಆ ಹುಡುಗಿಯನ್ನು ನನಗೆ ಮದುವೆಮಾಡಿಸಬೇಕು,” ಎಂದು ಕೇಳಿಕೊಂಡನು.</verse>
				<verse number="5">ತನ್ನ ಮಗಳಾದ ದೀನಳಿಗೆ ಶೆಕೆಮನಿಂದ ಮಾನಭಂಗವಾಯಿತೆಂಬ ಸಮಾಚಾರ ಯಕೋಬನಿಗೆ ಮುಟ್ಟಿದಾಗ ಅವನ ಗಂಡು ಮಕ್ಕಳು ಅಡವಿಯಲ್ಲಿ ದನಕಾಯುತ್ತಿದ್ದರು. ಅವರು ಬರುವ ತನಕ ಯಕೋಬನು ಸುಮ್ಮನೆ ಇದ್ದನು.</verse>
				<verse number="6">ಅಷ್ಟರಲ್ಲಿ, ಶೆಕೆಮನ ತಂದೆ ಹಮೋರನು ಯಕೋಬನ ಸಂಗಡ ಮಾತನಾಡಲು ಊರಿಂದ ಹೊರಟುಬಂದನು.</verse>
				<verse number="7">ಇತ್ತ ಯಕೋಬನ ಗಂಡು ಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದರು. ಶೆಕೆಮನು ತಮ್ಮ ತಂಗಿಯನ್ನು ಬಲಾತ್ಕಾರದಿಂದ ಕೂಡಿ, ಮಾಡಬಾರದನ್ನು ಮಾಡಿ, ಇಸ್ರಯೇಲರಿಗೆ ಘನ ಅವಮಾನವನ್ನು ಮಾಡಿದ್ದರಿಂದ ಅವರು ತಳಮಳಗೊಂಡು ಕಡುಕೋಪದಿಂದ ಇದ್ದರು.</verse>
				<verse number="8">ಹಮೋರನು ಅವರಿಗೆ, “ನನ್ನ ಮಗ ಶೆಕೆಮನು ನಿಮ್ಮ ಹುಡುಗಿಯನ್ನು ಬಹಳ ಆಸೆಯಿಂದ ಮೋಹಿಸಿದ್ದಾನೆ; ದಯವಿಟ್ಟು ಆಕೆಯನ್ನು ಅವನಿಗೆ ಮದುವೆ ಮಾಡಿಕೊಡಬೇಕು;</verse>
				<verse number="9">ಅಲ್ಲದೆ ನೀವು ನಮ್ಮಲ್ಲೇ ವಾಸವಾಗಿರಬಹುದು; ನಿಮ್ಮ ಹೆಣ್ಣುಮಕ್ಕಳನ್ನು ನಮಗೆ ಕೊಡಬೇಕು; ನಮ್ಮ ಹೆಣ್ಣು ಮಕ್ಕಳನ್ನು ನೀವು ತೆಗೆದುಕೊಳ್ಳಬೇಕು; ನಾವು ಬೀಗರಾಗಿ ಬಾಳಬೇಕು, ನಾಡೆಲ್ಲಾ ನಿಮ್ಮ ಮುಂದೆ ಇದೆ.</verse>
				<verse number="10">ಇದರಲ್ಲಿ ವಾಸಿಸಿ, ವ್ಯಾಪಾರಮಾಡಿ, ನೀವು ಆಸ್ತಿಯನ್ನು ಸಂಪಾದಿಸಿಕೊಳ್ಳಬಹುದು,” ಎಂದು ಹೇಳಿದನು.</verse>
				<verse number="11">ಬಳಿಕ ಶೆಕೆಮನು ಆ ಹುಡುಗಿಯ ತಂದೆ ಮತ್ತು ಸಹೋದರರಿಗೆ, “ನನ್ನ ಮೇಲೆ ನಿಮಗೆ ಕೃಪೆಯಿರಲಿ; ನೀವು ಹೇಳುವಷ್ಟನ್ನು ಕೊಡುತ್ತೇನೆ.</verse>
				<verse number="12">ಹೆಣ್ಣಿಗಾಗಿ ತೆರವನ್ನೂ ಕಾಣಿಕೆಯನ್ನೂ ನೀವು ಹೇಳುವ ಮೇರೆಗೆ ಎಷ್ಟಾದರೂ ಕೊಡುತ್ತೇನೆ. ಹೇಗೂ ಆ ಹುಡುಗಿಯನ್ನು ನನಗೆ ಮದುವೆ ಮಾಡಿಕೊಡಿ,” ಎಂದು ಕೇಳಿಕೊಂಡನು.</verse>
				<verse number="13">ಶೆಕೆಮನು ತಮ್ಮ ತಂಗಿ ದೀನಳನ್ನು ಕೆಡಿಸಿದ್ದರಿಂದ ಯಕೋಬನ ಮಕ್ಕಳು ಅವನಿಗೂ ಅವನ ತಂದೆ ಹಮೋರನಿಗೂ ಕಪಟದಿಂದ ಈ ಉತ್ತರಕೊಟ್ಟರು;</verse>
				<verse number="14">“ಸುನ್ನತಿ ಇಲ್ಲದವರಿಗೆ ನಮ್ಮ ತಂಗಿಯನ್ನು ಕೊಡುವುದಕ್ಕೆ ಆಗುವುದಿಲ್ಲ. ಹಾಗೆ ಕೊಡುವುದು ನಮಗೆ ಅವಮಾನಕರ.</verse>
				<verse number="15">ನಿಮ್ಮಲ್ಲಿ ಗಂಡಸರೆಲ್ಲರು ಸುನ್ನತಿಮಾಡಿಸಿಕೊಂಡು ನಮ್ಮಂತೆ ಆಗಬೇಕು.</verse>
				<verse number="16">ಹಾಗೆ ಮಾಡಿಸಿಕೊಂಡರೆ ಮಾತ್ರ ನಾವು ನಿಮ್ಮ ಮಾತಿನಂತೆ ನಮ್ಮ ಹೆಣ್ಣು ಮಕ್ಕಳನ್ನು ನಿಮಗೆ ಕೊಡಬಹುದು, ನಿಮ್ಮ ಹೆಣ್ಣು ಮಕ್ಕಳನ್ನು ನಾವು ತೆಗೆದುಕೊಳ್ಳಬಹುದು; ನಿಮ್ಮಲ್ಲಿ ವಾಸಮಾಡಿ, ನಿಮ್ಮೊಡನೆ ಒಂದೇ ಕುಲವಾಗಿರಬಹುದು.</verse>
				<verse number="17">ನೀವು ನಮ್ಮ ಮಾತಿಗೆ ಒಪ್ಪಿ ಸುನ್ನತಿಮಾಡಿಸಿಕೊಳ್ಳದೆ ಹೋದರೆ ನಾವು ನಮ್ಮ ಹುಡುಗಿಯನ್ನು ಕರೆದುಕೊಂಡು ಹೊರಟುಹೋಗುತ್ತೇವೆ,” ಎಂದರು.</verse>
				<verse number="18">ಅವರು ಹೇಳಿದ್ದು ಹಮೋರನಿಗೂ ಅವನ ಮಗ ಶೆಕೆಮನಿಗೂ ಉಚಿತವೆಂದೇ ತೋಚಿತು.</verse>
				<verse number="19">ಆ ಯುವಕನು ಯಕೋಬನ ಮಗಳಲ್ಲಿ ಅನುರಕ್ತನಾಗಿದ್ದುದರಿಂದ ಅವರು ಹೇಳಿದಂತೆ ಮಾಡಲು ಹಿಂಜರಿಯಲಿಲ್ಲ; ಅಪ್ಪನ ಮನೆಗೆ ಅವನೇ ಮುಖ್ಯಸ್ಥನಾಗಿದ್ದನು.</verse>
				<verse number="20">ಎಂತಲೆ ಹಮೋರನು ಮತ್ತು ಅವನ ಮಗ ಶೆಕೆಮನು ಊರಬಾಗಿಲಿಗೆ ಬಂದರು. ಊರಿನವರನ್ನೆಲ್ಲಾ ಸಂಬೋಧಿಸುತ್ತಾ, ಹೀಗೆಂದರು:</verse>
				<verse number="21">“ಈ ಜನರು ನಮ್ಮೊಡನೆ ಶಾಂತಿಸಮಾಧಾನದಿಂದಿದ್ದಾರೆ; ಇವರು ನಮ್ಮ ನಾಡಿನಲ್ಲೇ ವಾಸಮಾಡಿಕೊಂಡು ವ್ಯಾಪಾರಮಾಡಲಿ; ಈ ನಾಡು ಅವರಿಗೂ ನಮಗೂ ಸಾಕಾಗುವಷ್ಟು ವಿಸ್ತಾರವಾಗಿದೆ. ನಾವು ಅವರ ಹೆಣ್ಣು ಮಕ್ಕಳನ್ನು ಮದುವೆಮಾಡಿಕೊಳ್ಳೋಣ, ನಮ್ಮ ಹೆಣ್ಣು ಮಕ್ಕಳನ್ನು ಅವರಿಗೆ ಕೊಡೋಣ.</verse>
				<verse number="22">ಆದರೆ ಅವರು ಸುನ್ನತಿಮಾಡಿಕೊಂಡವರು. ಆದ್ದರಿಂದ ನಮ್ಮಲ್ಲಿಯೂ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು ಎನ್ನುತ್ತಾರೆ. ಹಾಗೆ ಮಾಡಿಸಿಕೊಂಡರೆ ಮಾತ್ರ ಇವರು ನಮ್ಮಲ್ಲಿ ವಾಸಮಾಡುವುದಕ್ಕೂ ನಮ್ಮ ಸಂಗಡ ಒಂದೇ ಕುಲವಾಗುವುದಕ್ಕೂ ಒಪ್ಪುತ್ತಾರೆ.</verse>
				<verse number="23">ಅವರ ಕುರಿದನಗಳೂ ಆಸ್ತಿಪಾಸ್ತಿಯೂ ಪಶುಪ್ರಾಣಿಗಳೂ ನಮ್ಮವುಗಳೇ ಆಗುತ್ತವಲ್ಲವೆ? ಆದ್ದರಿಂದ ಅವರು ನಮ್ಮಲ್ಲಿ ವಾಸಮಾಡುವಂತೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ\.</verse>
				<verse number="24">ಹಮೋರನ ಮತ್ತು ಅವನ ಮಗ ಶೆಕೆಮನ ಈ ಮಾತಿಗೆ ಊರಿನವರೆಲ್ಲರು ಸಮ್ಮತಿಸಿದರು. ಅಂತೆಯೇ ಅವರಲ್ಲಿದ್ದ ಗಂಡಸರೆಲ್ಲರು ಸುನ್ನತಿಮಾಡಿಸಿಕೊಂಡರು.</verse>
				<verse number="25">ಮೂರನೆಯ ದಿನ ಆ ಗಂಡಸರೆಲ್ಲರು ಗಾಯದಿಂದ ಇನ್ನು ಬಹಳ ಬಾಧೆಪಡುತ್ತಿದ್ದರು. ಆಗ, ಯಕೋಬನ ಮಕ್ಕಳಲ್ಲಿ ದೀನಳ ಸಹೋದರರಾದ ಸಿಮೆಯೋನ್ ಮತ್ತು ಲೇವಿ ಎಂಬ ಇಬ್ಬರು ಕೈಯಲ್ಲಿ ಕತ್ತಿಹಿಡಿದು ನಿಶ್ಚಿಂತೆ ಇಂದಿದ್ದ ಆ ಊರಿನವರ ಮೇಲೆ ಬಿದ್ದರು. ದಯೆದಾಕ್ಷಿಣ್ಯವಿಲ್ಲದೆ ಗಂಡಸರೆಲ್ಲರನ್ನು ಕೊಂದರು.</verse>
				<verse number="26">ಹಮೋರ್ ಮತ್ತು ಅವನ ಮಗ ಶೆಕೆಮನನ್ನು ಕೊಂದು ದೀನಳನ್ನು ಅವನ ಮನೆಯಿಂದ ಕರೆದುಕೊಂಡು ಹೊರಟುಹೋದರು.</verse>
				<verse number="27">ಯಕೋಬನ ಇತರ ಮಕ್ಕಳು ಹತರಾದವರ ಬಳಿಗೆ ಬಂದು, ‘ತಂಗಿಯನ್ನು ಅವಮಾನ ಪಡಿಸಿದವರು ಇವರೇ ಅಲ್ಲವೆ’, ಎಂದುಕೊಂಡು ಆ ಊರನ್ನೇ ಸೂರೆಮಾಡಿಬಿಟ್ಟರು.</verse>
				<verse number="28">ಊರ ಒಳಗೂ ಹೊರಗೂ ಇದ್ದ ಕುರಿ, ದನ, ಕತ್ತೆಗಳನ್ನು ಕಿತ್ತುಕೊಂಡರು.</verse>
				<verse number="29">ಮಡದಿ ಮಕ್ಕಳನ್ನೆಲ್ಲ ಸೆರೆಹಿಡಿದರು, ಅವರ ಮನೆಗಳಲ್ಲಿ ಇದ್ದುದನ್ನೆಲ್ಲ ದೋಚಿಕೊಂಡರು.</verse>
				<verse number="30">ಆಗ ಯಕೋಬನು, ಸಿಮೆಯೋನ್ ಮತ್ತು ಲೇವಿಯರಿಗೆ, “ನೀವು ನನ್ನ ಹೆಸರನ್ನು ಈ ನಾಡಿನ ನಿವಾಸಿಗಳಾದ ಕಾನಾನ್ಯರಿಗೂ ಪೆರಿಜೀಯರಿಗೂ ಅಸಹ್ಯಮಾಡಿಬಿಟ್ಟರಿ; ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಕೆಲವರೇ. ಈ ನಾಡಿನವರೆಲ್ಲರು ಒಟ್ಟಿಗೆ ಬಂದು ನನ್ನ ಮೇಲೆ ಬಿದ್ದರೆ ನಾನು ಮಾತ್ರವಲ್ಲ, ನನ್ನ ಮನೆಯವರೆಲ್ಲರೂ ನಿರ್ಮೂಲವಾಗುತ್ತೇವೆ ಅಲ್ಲವೇ?” ಎಂದನು.</verse>
				<verse number="31">ಅದಕ್ಕೆ ಅವರು, “ಅವನು ಮಾತ್ರ ನಮ್ಮ ತಂಗಿಯನ್ನು ಒಬ್ಬ ಬೀದಿಯ ಸೂಳೆಯಂತೆ ನಡೆಸಿಕೊಳ್ಳಬಹುದೋ?\ ಎಂದು ಪ್ರಶ್ನಿಸಿದರು.</verse>
			</chapter>
			<chapter number="35">
				<verse number="1">ದೇವರು ಯಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋಗಿ ಅಲ್ಲೇ ವಾಸಮಾಡು. ನೀನು ನಿನ್ನ ಅಣ್ಣ ಏಸಾವನ ಬಳಿಯಿಂದ ಓಡಿಹೋಗುವಾಗ ನಿನಗಲ್ಲಿ ದರ್ಶನ ಇತ್ತ ದೇವರು ನಾನೇ. ನನಗೊಂದು ಬಲಿಪೀಠವನ್ನು ಅಲ್ಲಿ ಕಟ್ಟಿಸು,” ಎಂದು ಹೇಳಿದರು.</verse>
				<verse number="2">ಆಗ ಯಕೋಬನು ತನ್ನ ಮನೆಯವರಿಗೂ ಹಾಗು ತನ್ನ ಸಂಗಡ ಇದ್ದ ಎಲ್ಲರಿಗೂ, “ನಿಮ್ಮಲ್ಲಿ ಇರುವ ಅನ್ಯ ದೇವರುಗಳನ್ನು ತೊರೆದುಬಿಡಿ; ನಿಮ್ಮನ್ನೇ ಶುದ್ಧೀಕರಿಸಿಕೊಂಡು ಮಡಿವಸ್ತ್ರಗಳನ್ನು ಹಾಕಿಕೊಳ್ಳಿ; ನಾವು ಬೇತೇಲಿಗೆ ಹೊರಟುಹೋಗೋಣ.</verse>
				<verse number="3">ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ಕಡೆಯೆಲ್ಲ ನನ್ನೊಂದಿಗಿದ್ದ ದೇವರಿಗೆ ಅಲ್ಲೊಂದು ಬಲಿಪೀಠವನ್ನು ಕಟ್ಟಿಸುತ್ತೇನೆ,” ಎಂದು ಹೇಳಿದನು.</verse>
				<verse number="4">ಅಂತೆಯೆ ಅವರು ತಮ್ಮಲ್ಲಿದ್ದ ಎಲ್ಲ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ಮುರುವುಗಳನ್ನೂ ಯಕೋಬನಿಗೆ ಒಪ್ಪಿಸಿಬಿಟ್ಟರು. ಅವನು ಅವುಗಳನ್ನು ಶೆಕೆಮ್ ಪಟ್ಟಣದ ಹತ್ತಿರ ಇದ್ದ ಒಂದು ಓಕ್ ಮರದ ಬುಡದಡಿಯಲ್ಲಿ ಹೂಳಿಬಿಟ್ಟನು.</verse>
				<verse number="5">ಅವರು ಪ್ರಯಾಣಮಾಡುತ್ತಿದ್ದಾಗ ದೇವರು ಸುತ್ತಮುತ್ತಣದ ಊರಿನವರಲ್ಲಿ ಭಯ ಹುಟ್ಟಿಸಿದರು. ಇದರಿಂದಾಗಿ ಆ ಊರಿವನರಾರೂ ಯಕೋಬನ ಮಕ್ಕಳನ್ನು ಹಿಂದಟ್ಟಿ ಬರಲಿಲ್ಲ.</verse>
				<verse number="6">ಯಕೋಬನೂ ಅವನ ಸಂಗಡವಿದ್ದ ಜನರೆಲ್ಲರೂ ಕಾನಾನ್ ನಾಡಿನಲ್ಲಿದ್ದ ಬೇತೇಲೆಂಬ ಊರಿಗೆ ಬಂದು ಸೇರಿದರು.</verse>
				<verse number="7">ಯಕೋಬನು ತನ್ನ ಅಣ್ಣನ ಬಳಿಯಿಂದ ಓಡಿಹೋಗುವಾಗ ದೇವರು ಅವನಿಗೆ ಪ್ರತ್ಯಕ್ಷವಾದುದು ಅಲ್ಲಿಯೇ. ಎಂದೇ ಅವನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿ, ಆ ಸ್ಥಳಕ್ಕೆ ‘ಏಲ್ ಬೇತೇಲ್’ ಎಂದು ಹೆಸರಿಟ್ಟನು.</verse>
				<verse number="8">ಅಲ್ಲಿರುವಾಗ ರೆಬೆಕ್ಕಳ ದಾದಿ ದೆಬೋರಳು ಸತ್ತುಹೋದಳು. ಆಕೆಯನ್ನು ಬೇತೇಲಿನ ಕಣಿವೆಯಲ್ಲಿರುವ ಮತ್ತೊಂದು ಓಕ್ ಮರದ ಬುಡದಲ್ಲಿ ಸಮಾಧಿಮಾಡಿ ಅದಕ್ಕೆ ‘ಅಲ್ಲೋನ್ ಬಾಕೂತ್’ ಎಂದು ಹೆಸರಿಟ್ಟರು.</verse>
				<verse number="9">ಯಕೋಬನು ಮೆಸಪೊಟೇಮಿಯಾದಿಂದ ಹಿಂದಿರುಗಿ ಬಂದಾಗ ದೇವರು ಮತ್ತೆ ಅವನಿಗೆ ದರ್ಶನಕೊಟ್ಟು ಅವನನ್ನು ಆಶೀರ್ವದಿಸಿದರು.</verse>
				<verse number="10">ಅವನಿಗೆ ದೇವರು, “ನಿನ್ನ ಹೆಸರು; ಯಕೋಬ ಅಲ್ಲವೇ? ಇನ್ನು ಮೇಲೆ ನೀನು ಯಕೋಬನೆನಿಸಿಕೊಳ್ಳದೆ 'ಇಸ್ರಯೇಲ್' ಎನಿಸಿಕೊಳ್ಳಬೇಕು” ಎಂದು ಹೇಳಿದರು. ಹೀಗೆ ಅವನ ಹೆಸರು ಇಸ್ರಯೇಲ್ ಆಯಿತು.</verse>
				<verse number="11">ಇದಲ್ಲದೆ ಅವನಿಗೆ ದೇವರು, “ನಾನೇ ಸರ್ವವಲ್ಲಭನಾದ ದೇವರು; ನೀನು ವೃದ್ಧಿಯಾಗಿ ಬಹುಸಂತಾನವುಳ್ಳವನಾಗು. ನಿನ್ನಿಂದ ರಾಷ್ಟ್ರವೊಂದು ಉಂಟಾಗುವುದು, ಅನೇಕ ರಾಷ್ಟ್ರಗಳೂ ರಾಜರುಗಳೂ ನಿನ್ನಿಂದ ಹುಟ್ಟುವರು.</verse>
				<verse number="12">ನಾನು ಅಬ್ರಹಾಮ್, ಇಸಾಕರಿಗೆ ವಾಗ್ಡಾನ ಮಾಡಿದ ನಾಡನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೂ ಕೊಡುವೆನು,” ಎಂದು ಹೇಳಿದರು.</verse>
				<verse number="13">ಬಳಿಕ ಅವನ ಸಂಗಡ ಮಾತನಾಡಿದ ಆ ಸ್ಥಳದಿಂದ ಮೇಲಕ್ಕೇರಿ ಹೋದರು.</verse>
				<verse number="14">ಯಕೋಬನು ತನ್ನೊಡನೆ ದೇವರು ಮಾತನಾಡಿದ ಆ ಸ್ಥಳದಲ್ಲಿ ಕಲ್ಲಿನ ಸ್ತಂಭವೊಂದನ್ನು ನಿಲ್ಲಿಸಿ, ಅದರ ಮೇಲೆ ಪಾನಕಾ ಅಭಿಷೇಕಮಾಡಿ, ಎಣ್ಣೆಹೊಯ್ದು ಅಭ್ಯಂಗಿಸಿದನು.</verse>
				<verse number="15">ಆ ಸ್ಥಳವನ್ನು ‘ಬೇತೇಲ್’ ಎಂದು ಹೆಸರಿಸಿದನು.</verse>
				<verse number="16">ಆ ಬಳಿಕ ಅವರು ಬೇತೇಲನ್ನು ಬಿಟ್ಟು ಹೊರಟರು. ಎಫ್ರಾತೂರಿಗೆ ಸೇರುವುದಕ್ಕೆ ಇನ್ನು ಸ್ವಲ್ಪ ದೂರವಿದ್ದಾಗ ರಾಖೇಲಳಿಗೆ ಹೆರಿಗೆಯ ಕಾಲ ಬಂದಿತು.</verse>
				<verse number="17">ಆಕೆ ಪ್ರಸವ ವೇದನೆಯಿಂದ ಬಹಳ ಕಷ್ಟಪಡುತ್ತಿದ್ದಾಗ ಸೂಲಗಿತ್ತಿಯು ಆಕೆಗೆ, “ಅಂಜಬೇಡ, ನಿನಗೆ ಇನ್ನೊಬ್ಬ ಮಗ ಹುಟ್ಟಿದ್ದಾನೆ,” ಎಂದು ಹೇಳಿದಳು.</verse>
				<verse number="18">ಆದರೆ ರಾಖೇಲಳು ಸತ್ತುಹೋದಳು. ಪ್ರಾಣಹೋಗುತ್ತಿದ್ದಾಗ ಆಕೆ ಆ ಮಗುವಿಗೆ ‘ಬೆನೋನಿ’ ಎಂದು ಹೆಸರಿಟ್ಟಳು. ಅದರ ತಂದೆಯಾದರೋ ಅದಕ್ಕೆ ಬೆನ್ಯಾಮೀನ್ ಎಂದು ಹೆಸರಿಟ್ಟನು.</verse>
				<verse number="19">ಅನಂತರ ರಾಖೇಲಳು ಸತ್ತುಹೋದಳು, ಆಕೆಯನ್ನು ಬೆತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಪಕ್ಕದಲ್ಲಿ ಸಮಾಧಿ ಮಾಡಿದರು.</verse>
				<verse number="20">ಯಕೋಬನು ಆಕೆಯ ಸಮಾಧಿಯ ಮೇಲೆ ಸ್ಮಾರಕಸ್ತಂಭವನ್ನು ನಿಲ್ಲಿಸಿದನು. ಅದು ಇಂದಿನವರೆಗೂ ರಾಖೇಲಳ ಸಮಾಧಿಸ್ತಂಭ ಎನಿಸಿಕೊಳ್ಳುತ್ತದೆ.</verse>
				<verse number="21">ಅಲ್ಲಿಂದ ಇಸ್ರಯೇಲನು ಪ್ರಯಾಣ ಬೆಳೆಸಿ ಮಿಗ್ದಲದ ಏದನ ಆಚೆಕಡೆಯಲ್ಲಿ ತನ್ನ ಗುಡಾರವನ್ನು ಹಾಕಿಸಿದನು.</verse>
				<verse number="22">ಇಸ್ರಯೇಲನು ಆ ನಾಡಿನಲ್ಲಿ ವಾಸವಾಗಿದ್ದಾಗ ರೂಬೇನ್ ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗಮಿಸಿದನು, ಈ ಸಂಗತಿ ತಿಳಿದುಬಂದಾಗ ಇಸ್ರಯೇಲನಿಗೆ ಕಡುಕೋಪವಾಯಿತು.</verse>
				<verse number="23">ಯಕೋಬನ ಹನ್ನೆರಡು ಗಂಡು ಮಕ್ಕಳ ಹೆಸರು ಇವು: ಯಕೋಬನ ಚೊಚ್ಚಲಮಗ ರೂಬೇನ್, ಸಿಮೆಯೋನ್, ಲೇವಿ, ಯೆಹೂದಾ, ಇಸ್ಸಾಕಾರ್, ಜೆಬುಲೂನ್ - ಇವರು ಲೇಯಳಲ್ಲಿ ಹುಟ್ಟಿದವರು.</verse>
				<verse number="24">ಜೋಸೆಫ್, ಬೆನ್ಯಾಮೀನ್ - ಇವರಿಬ್ಬರು ರಾಖೇಲಳಲ್ಲಿ ಹುಟ್ಟಿದವರು.</verse>
				<verse number="25">ದಾನ್, ನಫ್ತಾಲಿ - ಇವರು ರಾಖೇಲಳ ದಾಸಿ ಬಿಲ್ಹಳಲ್ಲಿ ಹುಟ್ಟಿದವರು.</verse>
				<verse number="26">ಗಾದ್, ಆಶೇರ್ - ಇವರಿಬ್ಬರು ಲೇಯಳ ದಾಸಿ ಜಿಲ್ಪಳಲ್ಲಿ ಹುಟ್ಟಿದವರು. ಮೆಸಪೊಟೇಮಿಯಾದಲ್ಲಿ ಯಕೋಬನಿಗೆ ಹುಟ್ಟಿದ ಮಕ್ಕಳು ಇವರೇ.</verse>
				<verse number="27">ಯಕೋಬನು ತನ್ನ ತಂದೆ ಇಸಾಕನ ಬಳಿಗೆ ಮಮ್ರೆಗೆ ಬಂದನು. ಮಮ್ರೆಯು ಹೆಬ್ರೋನೆಂಬ ಕಿರ್ಯತರ್ಬಕ್ಕೆ ಸೇರಿದುದು. ಅದೇ ಅಬ್ರಹಾಮ್ ಹಾಗು ಇಸಾಕನು ಪರದೇಶಸ್ಥರಾಗಿ ವಾಸವಾಗಿದ್ದ ಸ್ಥಳ.</verse>
				<verse number="28">ಇಸಾಕನು ಹಣ್ಣುಹಣ್ಣು ಮುದುಕನಾಗಿದ್ದು ನೂರ ಎಂಬತ್ತನೆಯ ವರ್ಷದಲ್ಲಿ ತೀರಿಕೊಂಡು ತನ್ನ ಪಿತೃಗಳ ಬಳಿಗೆ ಸೇರಿಕೊಂಡನು. ಅವನ ಮಕ್ಕಳಾದ ಏಸಾವ ಮತ್ತು ಯಕೋಬರು ಅವನನ್ನು ಸಮಾಧಿ ಮಾಡಿದರು.</verse>
			</chapter>
			<chapter number="36">
				<verse number="1">ಎತೋಮನೆಂಬ ಏಸಾವನ ವಂಶಾವಳಿ ಇದು:</verse>
				<verse number="2">ಏಸಾವನು ಕಾನಾನ್ಯರ ಮಹಿಳೆಯರಲ್ಲಿ ಹಿತ್ತಿಯನಾದ ಏಲೋನನ ಮಗಳಾದ ಆದಾಳನ್ನು, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳು ಒಹೊಲೀಬಾಮಳನ್ನು ಮತ್ತು</verse>
				<verse number="3">ಇಷ್ಮಾಯೇಲನ ಮಗಳು ಹಾಗು ನೆಬಾಯೋತನ ಸಹೋದರಿ ಬಾಸೆಮತಳನ್ನೂ ಮದುವೆ ಆಗಿದ್ದನು.</verse>
				<verse number="4">ಏಸಾವನಿಗೆ ಆದಾಳು ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಗೂವೇಲನನ್ನು ಹೆತ್ತಳು.</verse>
				<verse number="5">ಒಹೊಲೀಬಾಮಳು ಯೊಗೂಷನನ್ನು, ಯಳಾಮನನ್ನು ಹಾಗು ಕೋರಹನನ್ನು ಹೆತ್ತಳು. ಇವರೆಲ್ಲರು ಏಸಾವನು ಕಾನಾನ್ ನಾಡಿನಲ್ಲಿ ಇದ್ದಾಗ ಹುಟ್ಟಿದರು.</verse>
				<verse number="6">ಏಸಾವನು ತನ್ನ ಹೆಂಡತಿಯರನ್ನೂ ಗಂಡುಹೆಣ್ಣು ಮಕ್ಕಳನ್ನೂ ತನ್ನ ಮನೆಗೆ ಸೇರಿದ ಎಲ್ಲರನ್ನೂ, ತನಗಿದ್ದ ಪಶುಪ್ರಾಣಿಗಳನ್ನೂ ಕಾನಾನ್ ನಾಡಿನಲ್ಲಿ ತಾನು ಸಂಪಾದಿಸಿದ್ದ ಆಸ್ತಿಪಾಸ್ತಿ ಎಲ್ಲವನ್ನೂ ತೆಗೆದುಕೊಂಡು ತನ್ನ ತಮ್ಮ ಯಕೋಬನ ಬಳಿಯಿಂದ ಹೊರನಾಡಿಗೆ ಹೊರಟುಹೋದನು.</verse>
				<verse number="7">ಸಿರಿಸಂಪತ್ತು ಹೆಚ್ಚಾಗಿ ಇದ್ದುದರಿಂದ ಅವರಿಬ್ಬರೂ ಒಂದೇ ಸ್ಥಳದಲ್ಲಿ ವಾಸಮಾಡಲು ಅನುಕೂಲವಾಗಿರಲಿಲ್ಲ; ಪಶುಪ್ರಾಣಿಗಳು ಬಹಳ ಆಗಿದ್ದುದರಿಂದ ಅವರು ತಂಗಿದ್ದ ನಾಡು ಅವರಿಗೆ ಸಾಲದೆ ಹೋಯಿತು.</verse>
				<verse number="8">ಈ ಕಾರಣ ಏದೋಮನೆಂಬ ಏಸಾವನು ಸೇಯೀರ್ ಮಲೆನಾಡಿಗೆ ಹೋಗಿ ಅಲ್ಲೇ ವಾಸವಾಗಿದ್ದನು.</verse>
				<verse number="9">ಸೇಯೀರ್ ಮಲೆನಾಡಿನಲ್ಲಿದ್ದ ಎದೋಮ್ಯರ ಮೂಲಪುರುಷನಾದ ಏಸಾವನ ವಂಶಾವಳಿ ಹೀಗಿದೆ:</verse>
				<verse number="10">ಏಸಾವನಿಗೆ ಹೆಂಡತಿ ಆದಾಳಲ್ಲಿ ಮಗ ಎಲೀಫಜನು ಹುಟ್ಟಿದನು; ಹೆಂಡತಿ ಬಾಸೆಮತಳಲ್ಲಿ ಮಗ ರೆಗೂವೇಲನು ಹುಟ್ಟಿದನು.</verse>
				<verse number="11">ಎಲೀಫಜನಿಗೆ ತೇಮಾನ್, ಓಮಾರ್, ಚೆಫೋ, ಗತಾಮ್, ಕೆನಜ್, ಎಂಬ ಐದು ಮಕ್ಕಳು.</verse>
				<verse number="12">ಏಸಾವನ ಮಗನಾದ ಈ ಎಲೀಫಜನಿಗೆ ತಿಮ್ನ ಎಂಬ ಉಪಪತ್ನಿ ಇದ್ದಳು. ಇವಳು ಅವನಿಗೆ ಅಮಾಲೇಕನನ್ನು ಹೆತ್ತಳು. ಇವರೇ ಏಸಾವನ ಹೆಂಡತಿ ಆದಾಳ ಮೊಮ್ಮಕ್ಕಳು.</verse>
				<verse number="13">ರೆಗೂವೇಲನಿಗೆ ನಹತ್, ಜೆರಹ, ಶಮ್ಮಾ, ಮಿಜ್ಜಾ ಎಂಬ ನಾಲ್ಕು ಮಕ್ಕಳು. ಇವರು ಏಸಾವನ ಹೆಂಡತಿ ಬಾಸೆಮತಳ ಮೊಮ್ಮಕ್ಕಳು.</verse>
				<verse number="14">ಏಸಾವನ ಹೆಂಡತಿಯೂ ಸಿಬೆಯೋನನ ಮಗ ಅನಾಹನ ಮಗಳೂ ಆಗಿದ್ದ ಒಹೊಲೀಬಾಮಳಿಗೆ ಯೆಗೂಷ್, ಯಳಾಮ್ ಮತ್ತು ಕೋರಹ ಎಂಬ ಮೂರು ಮಕ್ಕಳಿದ್ದರು.</verse>
				<verse number="15">ಏಸಾವನ ವಂಶದ ಕುಲನಾಯಕರು: ಏಸಾವನ ಜೇಷ್ಠಪುತ್ರನಾದ ಎಲೀಫಜನಿಂದ ತೇಮಾನ, ಏಮಾರ, ಚೆಫೋ, ಕೆನೆಜ್,</verse>
				<verse number="16">ಕೊರಹ, ಗತಾಮ, ಅಮಾಲೇಕ ಎಂಬ ಕುಲನಾಯಕರು ಹುಟ್ಟಿದರು. ಈ ಅಧಿಪತಿಗಳು ಎದೋಮ್ಯರ ನಾಡಿನಲ್ಲಿ ಆದಾಳ ಸಂತತಿಯಲ್ಲಿ ಹುಟ್ಟಿದರು.</verse>
				<verse number="17">ಏಸಾವನ ಮಗ ರೆಗೂವೇಲನಿಗೆ ನಹತ, ಜೆರಹ, ಶಮ್ಮಾ, ಮಿಜ್ಜಾ ಎಂಬ ಕುಲನಾಯಕರು ಹುಟ್ಟಿದರು. ಇವರು ಎದೋಮ್ಯರ ನಾಡಿನಲ್ಲಿ ಏಸಾವನ ಹೆಂಡತಿ ಬಾಸೆಮತಳ ಸಂತತಿಯಲ್ಲಿ ಹುಟ್ಟಿದವರು.</verse>
				<verse number="18">ಏಸಾವನ ಹೆಂಡತಿ ಒಹೊಲೀಬಾಮಳ ಸಂತಾನದಲ್ಲಿ ಹುಟ್ಟಿದ ಕುಲನಾಯಕರು ಯಾರೆಂದರೆ - ಯೆಗೂಷ್, ಯಳಾಮ ಮತ್ತು ಕೊರಹ. ಇವರೇ ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳ ಸಂತಾನದವರು.</verse>
				<verse number="19">ಎದೋಮನೆನಿಸಿಕೊಳ್ಳುವ ಏಸಾವನಿಂದ ಹುಟ್ಟಿದ ಕುಲಗಳಿಗೆ ಇವರೇ ನಾಯಕರು.</verse>
				<verse number="20">ಆ ನಾಡಿನ ಮೂಲನಿವಾಸಿಗಳು ಹೋರಿಯನಾದ ಸೇಯೀರನಿಂದ ಹುಟ್ಟಿದವರು. ಲೋಟಾನ್, ಶೋಬಾಲ್, ಸಿದೆಯೋನ್, ಅನಾಹ,</verse>
				<verse number="21">ದೀಶೋನ್, ಏಚೆರ್, ದೀಶಾನ್, ಎಂದು ಅವರನ್ನು ಹೆಸರಿಸಲಾಗಿತ್ತು. ಅವರು ಎದೋಮ್ಯರ ನಾಡಿನಲ್ಲಿ ಸೇಯೀರನ ಸಂತತಿಯವರಾದ ಹೋರಿಯರಲ್ಲಿ ಹುಟ್ಟಿದ ಕುಲನಾಯಕರು.</verse>
				<verse number="22">ಲೋಟಾನನಿಗೆ ಹೋರಿ ಮತ್ತು ಹೇಮಾಮ್ ಎಂಬ ಮಕ್ಕಳಿದ್ದರು. ತಿಮ್ನಾ ಎಂಬ ತಂಗಿಯೂ ಇದ್ದಳು.</verse>
				<verse number="23">ಶೋಬಾಲನ ಮಕ್ಕಳು - ಅಲ್ವಾನ್, ಮಾನಹತ್, ಗೇಬಾಲ್,ಶೆಫೋ ಮತ್ತು ಓನಾಮ್ ಎಂಬುವರು.</verse>
				<verse number="24">ಸಿಬೆಯೋನನಿಗೆ ಅಯ್ಯಾ ಮತ್ತು ಅನಾಹ ಎಂಬ ಇಬ್ಬರು ಮಕ್ಕಳು. ಈ ಅನಾಹನೇ ತನ್ನ ತಂದೆ ಸಿಬೆಯೋನನ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಕಾಡಿನಲ್ಲಿ ಬಿಸಿ ನೀರಿನ ಒರತೆಗಳನ್ನು ಕಂಡುಹಿಡಿದವನು.</verse>
				<verse number="25">ಅನಾಹನ ಮಕ್ಕಳು ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮ.</verse>
				<verse number="26">ದೀಶೋನನ ಮಕ್ಕಳು - ಹೆಮ್ದಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್.</verse>
				<verse number="27">ಏಚೆರನ ಮಕ್ಕಳು - ಬಿಲ್ಹಾನ್, ಜಾವಾನ್ ಮತ್ತು ಆಕಾನ್.</verse>
				<verse number="28">ದೀಶಾನನ ಮಕ್ಕಳು ಊಚ್ ಮತ್ತು ಅರಾನ್.</verse>
				<verse number="29">ಹೋರಿಯರಿಂದ ಹುಟ್ಟಿದ ಕುಲನಾಯಕರು ಇವರು - ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,</verse>
				<verse number="30">ದೀಶೋನ್, ಏಚೆರ್ ಮತ್ತು ದೀಶಾನ್. ಹೋರಿಯರಿಂದ ಹುಟ್ಟಿದವರಾಗಿ ಸೇಯೀರ್ ನಾಡಿನಲ್ಲಿ ಅಧಿಪತ್ಯ ನಡೆಸಿದ ಕುಲನಾಯಕರು ಇವರೇ.</verse>
				<verse number="31">ಇಸ್ರಯೇಲರ ಅರಸರು ಆಳುವುದಕ್ಕೆ ಮುಂಚೆ ಎದೋಮ್ಯರ ನಾಡಲ್ಲಿ ಆಳುತ್ತಿದ್ದ ಅರಸರ ಹೆಸರುಗಳು ಹೀಗಿವೆ:</verse>
				<verse number="32">ಬೆಯೋರನ ಮಗ ಬಿಲಗನು ಎದೋಮ್ಯರಲ್ಲಿ ಆಳಿದನು, ಅವನ ರಾಜಧಾನಿಯ ಹೆಸರು ದಿನ್ಹಾಬಾ.</verse>
				<verse number="33">ಬೆಲಗನು ಸತ್ತ ಮೇಲೆ ಬೊಚ್ರದವನಾದ ಚೆರಹನ ಮಗ ಯೋಬಾಬನು ಆಧಿಪತ್ಯಕ್ಕೆ ಬಂದನು.</verse>
				<verse number="34">ಯೋಬಾಬನು ಸತ್ತ ಮೇಲೆ ತೇಮಾನೀಯರ ನಾಡಿನವನಾದ ಹುಷಾಮನು ಅವನಿಗೆ ಬದಲಾಗಿ ಆಳಿದನು.</verse>
				<verse number="35">ಹುಷಾಮನು ಸತ್ತ ಮೇಲೆ ಮೊವಾಬ್ಯರ ಬಯಲಿನಲ್ಲಿ ಮಿದ್ಯಾನರನ್ನು ಸೋಲಿಸಿದ ಬೆದದನ ಮಗನಾದ ಹದದನು ಅರಸನಾದನು. ಅವನ ರಾಜಧಾನಿಯ ಹೆಸರು ಅವೀತ್.</verse>
				<verse number="36">ಹದದನು ಸತ್ತ ಮೇಲೆ ಮಸ್ರೇಕದವನಾದ ಸಮ್ಲಾಹನು ಪಟ್ಟಕ್ಕೆ ಬಂದನು.</verse>
				<verse number="37">ಸಮ್ಲಾಹನು ಸತ್ತ ಮೇಲೆ ನದೀತೀರದಲ್ಲಿನ ರೆಹೋಬೋತೂರಿನ ಸೌಲನು ಅರಸನಾದನು.</verse>
				<verse number="38">ಸೌಲನು ಸತ್ತ ಮೇಲೆ ಅಕ್ಬೋರನ ಮಗ ಬಾಳ್ಹಾನಾನನು ಅರಸನಾದನು.</verse>
				<verse number="39">ಅಕ್ಬೋರನ ಮಗ ಬಾಳ್ಹಾನಾನನು ಸತ್ತಾದನಂತರ ಹದದನು ಅರಸನಾದನು; ಅವನ ರಾಜಧಾನಿಯ ಹೆಸರು ಪಾಗು, ಅವನ ಹೆಂಡತಿಯ ಹೆಸರು ಮಹೇಟಬೇಲ್; ಆಕೆ ಮೇಜಾಹಾಬನ ಮಗಳಾದ ಮಟ್ರೀದಳ ಮಗಳು.</verse>
				<verse number="40">ಸ್ಥಳ - ಕುಲ ನಾಮಗಳ ಪ್ರಕಾರ ಏಸಾವನಿಂದ ಹುಟ್ಟಿದ ಕುಲನಾಯಕರ ಹೆಸರುಗಳು ಇವು; ತಿಮ್ನ, ಅಲ್ವಾ, ಯತೇತ,</verse>
				<verse number="41">ಒಹೊಲೀಬಾಮಾ, ಏಲಾ, ಪೀನೋನ್,</verse>
				<verse number="42">ಕೆನಜ್, ತೇಮಾನ್, ಮಿಪ್ಚಾರ, ಮಗ್ಧೀಯೇಲ್, ಗೀರಾಮ್, ಇವರೇ ತಮ್ಮ ನಾಡಿನ ನಿವಾಸಸ್ಥಳಗಳ ಪ್ರಕಾರ ಎದೋಮ್ಯರ ಕುಲನಾಯಕರು. ಈ ಎದೋಮ್ಯರ ಮೂಲಪುರುಷನೇ ಏಸಾವ್.</verse>
			</chapter>
			<chapter number="37">
				<verse number="1">ಯಕೋಬನು ತನ್ನ ತಂದೆ ಪ್ರವಾಸಿ ಆಗಿದ್ದ ಕಾನಾನ್ ನಾಡಿನಲ್ಲಿ ವಾಸ ಆಗಿದ್ದನು. ಅವನ ಮಕ್ಕಳ ಚರಿತ್ರೆ ಇದು:</verse>
				<verse number="2">ಆಗ ಜೋಸೆಫನಿಗೆ ಹದಿನೇಳು ವರ್ಷ, ಇನ್ನೂ ಯುವಕ, ತನ್ನ ಅಣ್ಣಂದಿರ ಜೊತೆಯಲ್ಲಿ, ಅಂದರೆ ತನ್ನ ಮಲತಾಯಿಯರಾದ ಬಿಲ್ಹಾ, ಜಿಲ್ಪಾ ಎಂಬುವರ ಮಕ್ಕಳ ಜೊತೆಯಲ್ಲಿ, ಆಡುಕುರಿಗಳನ್ನು ಮೇಯಿಸುತ್ತಿದ್ದ, ಅಣ್ಣಂದಿರು ಏನಾದರೂ ತಪ್ಪಿ ನಡೆದರೆ ತಂದೆಗೆ ವರದಿ ಮಾಡುತ್ತಿದ್ದ.</verse>
				<verse number="3">ಜೋಸೆಫನು ಯಕೋಬನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗ. ಎಂದೇ ಯಕೋಬನಿಗೆ ಅವನ ಮೇಲೆ ಮಿಕ್ಕ ಮಕ್ಕಳಿಗಿಂತ ಮಿಗಿಲಾದ ಪ್ರೀತಿ. ಅಲಂಕೃತವಾದ ಒಂದು ನಿಲುವಂಗಿಯನ್ನೂ ಅವನಿಗೆ ಮಾಡಿಸಿಕೊಟ್ಟಿದ್ದ.</verse>
				<verse number="4">ತಂದೆ ತನ್ನ ಎಲ್ಲ ಮಕ್ಕಳಿಗಿಂತ ಇವನನ್ನೇ ಹೆಚ್ಚಾಗಿ ಪ್ರೀತಿಸುವುದನ್ನು ಕಂಡು, ಅಣ್ಣಂದಿರು ಆ ಜೋಸೆಫನನ್ನು ಹಗೆಮಾಡಿದರು. ಅವನೊಡನೆ ಸ್ನೇಹಭಾವದಿಂದಲೂ ಮಾತಾಡದೆಹೋದರು.</verse>
				<verse number="5">ಒಮ್ಮೆ ಜೋಸೆಫನಿಗೆ ಒಂದು ಕನಸು ಬಿತ್ತು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.</verse>
				<verse number="6">ಅವನು ಅವರಿಗೆ, “ನಾನು ಕನಸಿನಲ್ಲಿ ಕಂಡದ್ದನ್ನು ಹೇಳುತ್ತೇನೆ ಕೇಳಿ;</verse>
				<verse number="7">ಈ ಕನಸಿನಲ್ಲಿ ನಾವು ಹೊಲದಲ್ಲಿ ಬೆಳೆಕೊಯ್ದು ಕಂತೆಗಳನ್ನು ಕಟ್ಟುತ್ತಾ ಇದ್ದೆವು. ಆಗ ನನ್ನ ಕಂತೆ ಎದ್ದುನಿಂತಿತು. ನಿಮ್ಮ ಕಂತೆಗಳು ಸುತ್ತಲೂ ಬಂದು ನನ್ನ ಕಂತೆಗೆ ಅಡ್ಡಬಿದ್ದುದನ್ನು ಕಂಡೆ,” ಎಂದು ಹೇಳಿದ.</verse>
				<verse number="8">ಅದಕ್ಕೆ ಅವನ ಅಣ್ಣಂದಿರು, “ಏನು, ನೀನು ನಿಜವಾಗಿ ನಮ್ಮನ್ನು ಆಳುವೆಯಾ? ನಮ್ಮ ಮೇಲೆ ದೊರೆತನ ಮಾಡುವೆಯಾ?” ಎಂದು ಪ್ರಶ್ನಿಸಿದರು. ಅವನ ಕನಸುಗಳು, ಅವನ ಮಾತುಗಳು ಅವರನ್ನು ಮತ್ತಷ್ಟು ಹಗೆಗಳನ್ನಾಗಿ ಮಾಡಿದವು.</verse>
				<verse number="9">ಜೋಸೆಫನಿಗೆ ಇನ್ನೊಂದು ಕನಸು ಬಿತ್ತು. ಅದನ್ನೂ ಅವನು ಅಣ್ಣಂದಿರಿಗೆ ತಿಳಿಸಿದ: “ನಾನು ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯ, ಚಂದ್ರ, ಹಾಗೂ ನಕ್ಷತ್ರಗಳೂ ನನಗೆ ಅಡ್ಡಬಿದ್ದವು,” ಎಂದು ಹೇಳಿದ.</verse>
				<verse number="10">ಈ ಕನಸನ್ನು ಅಣ್ಣಂದಿರಿಗೆ ಮಾತ್ರವಲ್ಲ, ತಂದೆಗೂ ತಿಳಿಸಿದ. ತಂದೆ ಅವನಿಗೆ, “ಇದೆಂಥ ಕನಸು, ನೀನು ಕಂಡದ್ದು! ನಾನು, ನಿನ್ನ ತಾಯಿ, ಹಾಗು ಅಣ್ಣತಮ್ಮಂದಿರು ನಿನಗೆ ಅಡ್ಡಬೀಳಲು ಬರುತ್ತೇವೋ” ಎಂದು ಹೇಳಿ ಅವನನ್ನು ಗದರಿಸಿದ.</verse>
				<verse number="11">ಅಣ್ಣಂದಿರೋ ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ತಂದೆ ಈ ವಿಷಯವನ್ನು ಮನಸ್ಸಿನಲ್ಲೇ ಮೆಲುಕುಹಾಕಿದ.</verse>
				<verse number="12">ಒಮ್ಮೆ ಜೋಸೆಫನ ಅಣ್ಣಂದಿರು ತಂದೆಯ ಆಡುಕುರಿಗಳನ್ನು ಮೇಯಿಸಲು ಶೆಕೆಮಿಗೆ ಹೋಗಿದ್ದರು.</verse>
				<verse number="13">ಯಕೋಬನು ಜೋಸೆಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ, ಅಲ್ಲವೆ? ಅವರ ಬಳಿಗೆ ನಿನ್ನನ್ನು ಕಳಿಸಬೇಕೆಂದಿದ್ದೇನೆ,” ಎನ್ನಲು</verse>
				<verse number="14">ಅವನು, “ಇಗೋ ಸಿದ್ಧನಿದ್ದೇನೆ,” ಎಂದ. ಯಕೋಬನು ಅವನಿಗೆ, \ನೀನು ಹೋಗಿ ನಿನ್ನ ಅಣ್ಣಂದಿರ ಹಾಗೂ ಆಡುಕುರಿಗಳ ಯೋಗಕ್ಷೇಮವನ್ನು ವಿಚಾರಿಸಿಕೊಂಡು ಬಾ,” ಎಂದು ಅಪ್ಪಣೆಕೊಟ್ಟು ಅವನನ್ನು ಹೆಬ್ರೋನ್ ಕಣಿವೆಯಿಂದ ಕಳಿಸಿಕೊಟ್ಟ.</verse>
				<verse number="15">ಜೋಸೆಫನು ಹೊರಟ. ಶೆಕೆಮ್‍ಗೆ ಬಂದು ಅಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನನ್ನು ಕಂಡ. ಆ ಮನುಷ್ಯ, “ಏನು ಹುಡುಕುತ್ತಾ ಇದ್ದೀಯಾ?” ಎಂದು ವಿಚಾರಿಸಿದ.</verse>
				<verse number="16">ಜೋಸೆಫನು, “ನನ್ನ ಅಣ್ಣಂದಿರನ್ನು ಹುಡುಕುತ್ತಾ ಇದ್ದೇನೆ; ಅವರು ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಿದ್ದಾರೆ, ದಯವಿಟ್ಟು ಹೇಳು” ಎಂದ.</verse>
				<verse number="17">ಅದಕ್ಕೆ ಆ ಮನುಷ್ಯ, “ಅವರು ಇಲ್ಲಿಂದ ಹೊರಟುಹೋದರು; ‘ದೋತಾನಿಗೆ ಹೋಗೋಣ’ ಎಂದು ಮಾತಾಡುವುದನ್ನು ಕೇಳಿದೆ,” ಎಂದ. ಜೋಸೆಫನು ಅವರನ್ನು ಹುಡುಕುತ್ತಾ ಹೋಗಿ, ದೋತಾನಿನಲ್ಲಿ ಅವರನ್ನು ಕಂಡ.</verse>
				<verse number="18">ಅಣ್ಣಂದಿರು ಅವನನ್ನು ದೂರದಿಂದಲೇ ನೋಡಿದರು. ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲಲು ಒಳಸಂಚು ಮಾಡಿಕೊಂಡರು.</verse>
				<verse number="19">ಅಗೋ ಆ ಕನಸುಗಾರ ಬರುತ್ತಾ ಇದ್ದಾನೆ!</verse>
				<verse number="20">ನಾವು ಅವನನ್ನು ಕೊಂದು ಈ ಬಾವಿಯೊಂದರಲ್ಲಿ ಹಾಕಿಬಿಡೋಣ. 'ಕಾಡುಮೃಗ ಅವನನ್ನು ತಿಂದುಬಿಟ್ಟಿತು'; ಎಂದು ಹೇಳಿದರೆ ಆಯಿತು, ಬನ್ನಿ, ಆಗ ಅವನ ಕನಸುಗಳು ಏನಾಗುತ್ತವೋ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತಾಡಿಕೊಂಡರು.</verse>
				<verse number="21">ರೂಬೇನನು ಈ ಮಾತನ್ನು ಕೇಳಿಸಿಕೊಂಡು, ಅವನನ್ನು ಅವರ ಕೈಯಿಂದ ತಪ್ಪಿಸುವ ಉದ್ದೇಶದಿಂದ, “ನಾವು ಅವನ ಪ್ರಾಣ ತೆಗೆಯಬೇಕಾಗಿಲ್ಲ,</verse>
				<verse number="22">ರಕ್ತಪಾತ ಕೂಡದು, ಕಾಡಿನಲ್ಲಿರುವ ಈ ಬಾವಿ ಒಂದರಲ್ಲಿ ಹಾಕಿಬಿಡಿ, ಅವನ ಮೇಲೆ ಕೈಹಾಕಬೇಡಿ,” ಎಂದು ಅವನಿಗೆ ಹೇಳಿದ. ಅವನನ್ನು ಅವರಿಂದ ತಪ್ಪಿಸಿ ತಂದೆಗೆ ಮತ್ತೆ ಒಪ್ದಿಸಬೇಕೆಂಬ ಗುರಿ ರೂಬೇನನದಾಗಿತ್ತು.</verse>
				<verse number="23">ಜೋಸೆಫನು ತನ್ನ ಅಣ್ಣಂದಿರ ಹತ್ತಿರಕ್ಕೆ ಬಂದಾಗ ಅವರು ಅವನ ಮೇಲಿದ್ದ ನಿಲುವಂಗಿಯನ್ನು ತೆಗೆದುಬಿಟ್ಟರು.</verse>
				<verse number="24">ಅವನನ್ನು ಹಿಡಿದು ಬಾವಿಯೊಳಗೆ ಹಾಕಿದರು. ಆ ಬಾವಿ ನೀರಿಲ್ಲದೆ ಬರಿದಾಗಿತ್ತು.</verse>
				<verse number="25">ತರುವಾಯ ಅವರು ಊಟಕ್ಕೆ ಕುಳಿತುಕೊಂಡರು. ಅಷ್ಟರಲ್ಲಿ, ಇಷ್ಮಾಯೇಲರ ಗುಂಪೊಂದು ಗಿಲ್ಯಾದಿನಿಂದ ಬರುವುದು ಅವರ ಕಣ್ಣಿಗೆ ಕಾಣಿಸಿತು. ಇವರು ತಮ್ಮ ಒಂಟೆಗಳ ಮೇಲೆ ಪರಿಮಳ ಪದಾರ್ಥ, ಸುಗಂಧ ತೈಲ, ರಸಗಂಧ ಇವುಗಳನ್ನು ಹೇರಿಕೊಂಡು, ಈಜಿಪ್ಟಿಗೆ ಪ್ರಯಾಣಮಾಡುತ್ತಿದ್ದರು.</verse>
				<verse number="26">ಆಗ ಯೆಹೂದನು ತನ್ನ ಅಣ್ಣತಮ್ಮಂದಿರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಆ ಕೊಲೆಯನ್ನು ಮರೆಮಾಡಿದರೆ ಪ್ರಯೋಜನವೇನು?</verse>
				<verse number="27">ಅವನನ್ನು ಆ ಇಷ್ಮಾಯೇಲರಿಗೆ ಮಾರಿಬಿಡೋಣ, ಬನ್ನಿ; ನಾವು ಅವನ ಮೇಲೆ ಕೈ ಹಾಕಬಾರದು, ಅವನು ನಮ್ಮ ತಮ್ಮನಲ್ಲವೆ? ರಕ್ತಸಂಬಂಧಿಯಲ್ಲವೆ?” ಎಂದು ಹೇಳಿದ. ಅವನ ಆ ಮಾತಿಗೆ ಅಣ್ಣತಮ್ಮಂದಿರು ಒಪ್ಪಿದರು.</verse>
				<verse number="28">ಅಷ್ಟರಲ್ಲಿ, ಮಿದ್ಯಾನಿನ ವರ್ತಕರು ಹಾದುಹೋಗುತ್ತಿದ್ದರು. ಅವರು ಜೋಸೆಫನನ್ನು ಬಾವಿಯೊಳಗಿಂದ ಎತ್ತಿ ಈ ಇಷ್ಮಾಯೇಲರಿಗೆ ಇಪ್ಪತ್ತು ಬೆಳ್ಳಿನಾಣ್ಯಗಳಿಗೆ ಮಾರಿಬಿಟ್ಟರು. ಇವರು ಅವನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದರು.</verse>
				<verse number="29">ರೂಬೇನನು ಮರಳಿ ಆ ಬಾವಿಯ ಬಳಿಗೆ ಬಂದು ನೋಡಿದನು. ಅದರಲ್ಲಿ ಜೋಸೆಫನು ಇರಲಿಲ್ಲ.</verse>
				<verse number="30">ದುಃಖವನ್ನು ತಾಳಲಾರದೆ ತನ್ನ ಬಟ್ಟೆಯನ್ನು ಹರಿದುಕೊಂಡನು; ತಮ್ಮಂದಿರ ಬಳಿಗೆ ಬಂದು, “ಆ ಹುಡುಗ ಇಲ್ಲವಲ್ಲಾ! ಅಯ್ಯೋ, ನಾನೇನು ಮಾಡಲಿ?” ಎಂದು ಗೋಳಾಡಿದ.</verse>
				<verse number="31">ಬಳಿಕ ಅವರು ಒಂದು ಹೋತವನ್ನು ಕೊಯ್ದು, ಅದರ ರಕ್ತದಲ್ಲಿ ಜೋಸೆಫನ ನಿಲುವಂಗಿಯನ್ನು ಅದ್ದಿ</verse>
				<verse number="32">ಆ ಅಂಗಿಯನ್ನು ತಮ್ಮ ತಂದೆಗೆ ಕಳಿಸಿದರು. ಅದನ್ನು ತಂದವರು, “ಇದು ನಮಗೆ ಸಿಕ್ಕಿತು; ಇದು ನಿಮ್ಮ ಮಗನ ಅಂಗಿಯೋ ಅಲ್ಲವೋ ನೋಡಿ,” ಎಂದು ಹೇಳಿದರು.</verse>
				<verse number="33">ಯಕೋಬನು ಅದರ ಗುರುತನ್ನು ಹಿಡಿದು, ” ಈ ಅಂಗಿ ನಿಶ್ಚಯವಾಗಿ ನನ್ನ ಮಗನದೇ; ಕಾಡುಮೃಗ ಅವನನ್ನು ಕೊಂದು ತಿಂದಿರಬೇಕು, ಜೋಸೆಫನನ್ನು ಅದು ನಿಸ್ಸಂದೇಹವಾಗಿ ಸೀಳಿಹಾಕಿರಬೇಕು,” ಎಂದು ಹೇಳಿ,</verse>
				<verse number="34">ದುಃಖ ತಾಳಲಾಗದೆ ತನ್ನ ಬಟ್ಟೆಯನ್ನು ಹರಿದುಕೊಂಡ; ನಡುವಿಗೆ ಗೋಣಿತಟ್ಟನ್ನು ಸುತ್ತಿಕೊಂಡ; ತನ್ನ ಮಗನಿಗಾಗಿ ಬಹುದಿನಗಳವರೆಗೂ ಅತ್ತು ಪ್ರಲಾಪಿಸಿದ.</verse>
				<verse number="35">ದುಃಖಶಮನಮಾಡಲು ಪುತ್ರಪುತ್ರಿಯರೆಲ್ಲರು ಎಷ್ಟು ಪ್ರಯತ್ನಿಸಿದರೂ ಅವನು ಸಾಂತ್ವನಗೊಳ್ಳಲಿಲ್ಲ; \ನಾನು ಹೀಗೆಯೇ ಹಂಬಲಿಸುತ್ತಾ ನನ್ನ ಮಗನಿರುವ ಮೃತ್ಯುಲೋಕವನ್ನು ಸೇರುತ್ತೇನೆ,” ಎಂದು ಮಗನಿಗಾಗಿ ದುಃಖಿಸುತ್ತಲೇ ಇದ್ದ.</verse>
				<verse number="36">ಮಿದ್ಯಾನ್ಯರು ಜೋಸೆಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಫರೋಹನ ಆಸ್ಥಾನದಲ್ಲಿದ್ದ ಪೋಟೀಫರನಿಗೆ ಮಾರಿದರು; ಇವನು, ದೊಡ್ಡ ಉದ್ಯೋಗಸ್ಥನೂ ಮೈಗಾವಲಿನವರ ದಳಪತಿಯೂ ಆಗಿದ್ದನು.</verse>
			</chapter>
			<chapter number="38">
				<verse number="1">ಇತ್ತ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಅದುಲ್ಲಾಮ್ ಊರಿನವನಾದ ಹೀರಾ ಎಂಬವನ ಬಳಿ ವಾಸಮಾಡಲು ಹೋದನು.</verse>
				<verse number="2">ಅಲ್ಲಿ ಕಾನಾನ್ಯಳಾದ ಒಬ್ಬ ಮಹಿಳೆಯನ್ನು ಕಂಡು ಮದುವೆಯಾದನು. ಅವಳ ತಂದೆಯ ಹೆಸರು ಶೂಗ.</verse>
				<verse number="3">ಆಕೆ ಯೆಹೂದನಿಗೆ ಒಂದು ಗಂಡು ಮಗುವನ್ನು ಹೆತ್ತಳು. ಅದಕ್ಕೆ ‘ಏರ’ ಎಂದು ಹೆಸರಿಡಲಾಯಿತು.</verse>
				<verse number="4">ಆಕೆ ಗರ್ಭಧರಿಸಿ ಎರಡನೆಯ ಗಂಡು ಮಗುವನ್ನು ಹೆರಲು ಅದಕ್ಕೆ ‘ಓನಾನ’ ಎಂದು ಹೆಸರಿಡಲಾಯಿತು.</verse>
				<verse number="5">ಮತ್ತೊಮ್ಮೆ ಆಕೆ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು. ಅದಕ್ಕೆ ‘ಶೇಲಹ’ ಎಂದು ಹೆಸರಿಟ್ಟಳು. ಆಕೆ ಈ ಮಗುವನ್ನು ಹೆರುವಾಗ ಯೆಹೂದನು ಕೆಜೀಬ್ ಊರಿನಲ್ಲಿದ್ದನು.</verse>
				<verse number="6">ಯೆಹೂದನು ತನ್ನ ಜೇಷ್ಠಪುತ್ರ ಏರನಿಗೆ ‘ತಾಮಾರ್’ ಎಂಬ ಹೆಣ್ಣನ್ನು ತಂದು ಮದುವೆಮಾಡಿದನು.</verse>
				<verse number="7">ಆದರೆ ಯೆಹೂದನ ಈ ಹಿರಿಯ ಮಗ ಸರ್ವೇಶ್ವರ ಸ್ವಾಮಿಯ ದೃಷ್ಟಿಯಲ್ಲಿ ಕೆಟ್ಟವನಾಗಿದ್ದನು. ಆದ್ದರಿಂದ ಸರ್ವೇಶ್ವರ ಅವನನ್ನು ಸಾವಿಗೀಡುಮಾಡಿದರು.</verse>
				<verse number="8">ಬಳಿಕ ಯೆಹೂದನು ಓನಾನನಿಗೆ, “ನೀನು ನಿನ್ನ ಅತ್ತಿಗೆಯನ್ನು ಮದುವೆ ಮಾಡಿಕೊಂಡು ಮೈದುನ ಧರ್ಮಕ್ಕನುಸಾರ ನಿನ್ನ ಅಣ್ಣನಿಗೆ ಸಂತತಿಯನ್ನು ಹುಟ್ಟಿಸು,” ಎಂದನು.</verse>
				<verse number="9">ಆದರೆ ಓನಾನನು, ಹೀಗೆ ಆಗುವ ಸಂತಾನ ತನ್ನದಾಗುವುದಿಲ್ಲವೆಂದು ತಿಳಿದುಕೊಂಡನು. ಅಣ್ಣನಿಗೆ ಸಂತತಿ ಹುಟ್ಟಿಸಲು ಅವನು ಒಪ್ಪಲಿಲ್ಲ. ತನ್ನ ಅತ್ತಿಗೆಯಲ್ಲಿ ಸಂಭೋಗ ಮಾಡುವಾಗಲೆ ತನ್ನ ವೀರ್ಯವನ್ನು ಹಾಸಿಗೆಪಾಲು ಮಾಡುತ್ತಿದ್ದನು.</verse>
				<verse number="10">ಈ ನಡತೆ ಸರ್ವೇಶ್ವರ ಸ್ವಾಮಿಯ ದೃಷ್ಟಿಯಲ್ಲಿ ಕೆಟ್ಟದಾಗಿತ್ತು. ಆದ್ದರಿಂದ ಸರ್ವೇಶ್ವರ ಅವನನ್ನೂ ಸಾವಿಗೀಡುಮಾಡಿದರು.</verse>
				<verse number="11">ಅನಂತರ ಯೆಹೂದನು, ಬಹುಶಃ ಶೇಲಹನು ಕೂಡ ತನ್ನ ಅಣ್ಣಂದಿರಂತೆ ಸತ್ತಾನೆಂದು ಆಲೋಚಿಸಿ, ತನ್ನ ಸೊಸೆ ತಾಮಾರಳಿಗೆ, “ನನ್ನ ಮಗ ಶೇಲಹನು ಪ್ರಾಯಸ್ಥನಾಗುವ ತನಕ ನೀನು ವಿಧವೆಯಾಗಿ ತೌರುಮನೆಯಲ್ಲಿರು,” ಎಂದು ನೆವಹೇಳಿದನು. ಅಂತೆಯೇ ಅವಳು ತೌರುಮನೆಗೆ ಹೋಗಿ ಅಲ್ಲೇ ವಾಸಮಾಡಿದಳು.</verse>
				<verse number="12">ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ತೀರಿಹೋದಳು. ದುಃಖಶಮನವಾದ ಮೇಲೆ ಯೆಹೂದನು, ತನ್ನ ಕುರಿಗಳಿಗೆ ಉಣ್ಣೇ ಕತ್ತರಿಸುವವರಿದ್ದ ತಿಮ್ನಾ ಊರಿಗೆ ಹೋದನು. ಅದುಲ್ಲಾಮ್ಯದ ತನ್ನ ಗೆಳೆಯ ಹೀರಾ ಅವನ ಜೊತೆಯಲ್ಲಿ ಹೋದನು.</verse>
				<verse number="13">ಮಾವನು ತನ್ನ ಕುರಿಗಳ ಉಣ್ಣೇ ಕತ್ತರಿಸುವುದಕ್ಕಾಗಿ ತಿಮ್ನಾ ಊರಿಗೆ ಹೊರಟಿದ್ದಾರೆಂಬ ಸಮಾಚಾರ ತಾಮಾರಳಿಗೆ ಮುಟ್ಟಿತು.</verse>
				<verse number="14">ಆಗ ಆಕೆ, ‘ಶೇಲಹನು ಪ್ರಾಯಸ್ಥನಾಗಿದ್ದರೂ ನನ್ನನ್ನು ಅವನಿಗೆ ಮದುವೆ ಮಾಡಿಕೊಡಲಿಲ್ಲವಲ್ಲಾ’ ಎಂದುಕೊಂಡು ತನ್ನ ವಿಧವೆ ವಸ್ತ್ರಗಳನ್ನು ತೆಗೆದಿಟ್ಟಳು. ಮುಸುಕನ್ನು ಹಾಕಿಕೊಂಡು ತನ್ನನ್ನೇ ಮರೆಸಿಕೊಂಡಳು. ತಿಮ್ನಾ ಊರಿನ ದಾರಿಯಲ್ಲಿ ಇರುವ ಏನಯಿಮ್ ಊರಿನ ಬಾಗಿಲ ಬಳಿಯಲ್ಲೆ ಕುಳಿತುಕೊಂಡಳು.</verse>
				<verse number="15">ಯೆಹೂದನು ಆಕೆಯನ್ನು ನೋಡಿದಾಗ ಆಕೆಯ ಮುಖದ ಮೇಲೆ ಮುಸುಕು ಇತ್ತು; ಸೊಸೆ ಎಂದು ತಿಳಿಯದೆ ಹೋಯಿತು.</verse>
				<verse number="16">ಆಕೆ ವೇಶ್ಯೆ ಎಂದೇ ಭಾವಿಸಿ, ದಾರಿಯಿಂದ ಓರೆಯಾಗಿ, ಆಕೆಯ ಬಳಿಗೆ ಹೋಗಿ, “ಸಂಭೋಗಕ್ಕೆ ಬರುತ್ತೀಯಾ?\ ಎಂದು ಕರೆದನು. “ಬರಬೇಕಾದರೆ ಏನು ಕೊಡುತ್ತೀಯಾ?\ ಎಂದಳು ಆಕೆ.</verse>
				<verse number="17">“ಹಿಂಡಿನಿಂದ ಒಂದು ಹೋತಮರಿಯನ್ನು ಕಳಿಸುತ್ತೇನೆ,” ಎಂದ ಆತ. ಆಗ ಆಕೆ, \ಅದನ್ನು ಕಳಿಸುವ ತನಕ ನನ್ನಲ್ಲಿ ಏನಾದರು ಒತ್ತೆಯಿಡಬೇಕು,” ಎಂದಳು.</verse>
				<verse number="18">“ಏನು ಒತ್ತೆಯಿಡಬೇಕು?” ಎಂದು ಅವನು ಕೇಳಲು ಆಕೆ, “ನಿನ್ನ ಮುದ್ರೆ ಉಂಗುರ, ಅದರ ದಾರ ಮತ್ತು ನಿನ್ನ ಕೈಕೋಲು, ಈ ಮೂರನ್ನೂ ಇಡು,” ಎಂದಳು. ಅವನು ಅವುಗಳನ್ನು ಕೊಟ್ಟು ಆಕೆಯನ್ನು ಸಂಭೋಗಿಸಿದನು. ಆಕೆ ಅವನಿಗೆ ಗರ್ಭವತಿ ಆದಳು.</verse>
				<verse number="19">ಮನೆಗೆ ಬಂದ ಮೇಲೆ ತಾನು ಹಾಕಿಕೊಂಡಿದ್ದ ಮುಸುಕನ್ನು ತೆಗೆದಿಟ್ಟು ವಿಧವೆಯ ವಸ್ತ್ರಗಳನ್ನು ಮತ್ತೆ ಉಟ್ಟುಕೊಂಡಳು.</verse>
				<verse number="20">ಯೆಹೂದನು ತಾನು ಇಟ್ಟಿದ್ದ ಒತ್ತೆಯನ್ನು ಆ ಹೆಂಗಸಿನಿಂದ ಬಿಡಿಸಿಕೊಳ್ಳುವ ಸಲುವಾಗಿ ತನ್ನ ಗೆಳೆಯ ಆ ಅದುಲ್ಲಾಮ್ಯನ ಸಂಗಡ ಹೋತಮರಿಯನ್ನು ಕಳಿಸಿದನು. ಆಕೆ ಅವನಿಗೆ ಸಿಕ್ಕಲಿಲ್ಲ.</verse>
				<verse number="21">ಅವನು ಅವಳ ಊರಿನವರನ್ನು, “ಏನಯಿಮ್ ಬಳಿ ದಾರಿಪಕ್ಕದಲ್ಲಿ ಕುಳಿತಿದ್ದ ವೇಶ್ಯೆ ಎಲ್ಲಿ?” ಎಂದು ವಿಚಾರಿಸಿದನು. ಅವರು, “ಇಲ್ಲಿ ಯಾವ ವೇಶ್ಯೆಯೂ ಇಲ್ಲ,” ಎಂದು ಉತ್ತರಕೊಟ್ಟರು.</verse>
				<verse number="22">ಅವನು ಯೆಹೂದನ ಬಳಿಗೆ ಹಿಂದಿರುಗಿ ಬಂದು, “ನಾನು ಅವಳನ್ನು ಕಾಣಲಿಲ್ಲ; ವಿಚಾರಿಸಿದಾಗ ಆ ಊರಿನವರು ಇಲ್ಲಿ ಯಾವ ವೇಶ್ಯೆಯೂ ಇಲ್ಲವೆಂದರು,” ಎಂದು ವರದಿಮಾಡಿದನು.</verse>
				<verse number="23">ಅದಕ್ಕೆ ಯೆಹೂದನು, “ಇನ್ನು ನಾವು ಪರಿಹಾಸ್ಯಕ್ಕೆ ಗುರಿಯಾದೇವು; ನಾನಿಟ್ಟ ಒತ್ತೆಯನ್ನು ಅವಳೇ ಇಟ್ಟುಕೊಳ್ಳಲಿ; ನಾನಂತೂ ಹೋತಮರಿಯನ್ನು ಕಳಿಸಿದ್ದಾಯಿತು; ನಿನ್ನಿಂದಲು ಅವಳನ್ನು ಕಂಡುಹಿಡಿಯಲಾಗಲಿಲ್ಲ,” ಎಂದು ಸುಮ್ಮನಾದನು.</verse>
				<verse number="24">ಸುಮಾರು ಮೂರು ತಿಂಗಳಾದ ಬಳಿಕ, ಯೆಹೂದನಿಗೆ ತನ್ನ ಸೊಸೆ ತಾಮಾರಳು ವ್ಯಭಿಚಾರದಿಂದ ಗರ್ಭವತಿಯಾಗಿದ್ದಾಳೆಂಬ ಸಮಾಚಾರ ಬಂದಿತು. ಅವನು, “ಅವಳನ್ನು ಎಳೆದು ತನ್ನಿ; ಸುಟ್ಟುಹಾಕಬೇಕು,” ಎಂದನು.</verse>
				<verse number="25">ಅಂತೆಯೇ ಎಳೆದು ತರುವಾಗ ಆಕೆ ತನ್ನ ಮಾವನಿಗೆ ಒತ್ತೆಯ ವಸ್ತುಗಳನ್ನು ಕಳುಹಿಸುತ್ತಾ, “ಇವು ಯಾವನವೊ ಅವನಿಂದಲೇ ನಾನು ಗರ್ಭಿಣಿಯಾದುದು; ಮುದ್ರೆಯುಂಗುರ, ಅದರ ದಾರ ಮತ್ತು ಕೈಗೋಲು ಇವುಗಳನ್ನು ಗುರುತಿಸಿ ತಿಳಿದುಕೊಳ್ಳಬಹುದು,” ಎಂದು ಹೇಳಿಕಳಿಸಿದಳು.</verse>
				<verse number="26">ಯೆಹೂದನು ಅವುಗಳ ಗುರುತುಹಚ್ಚಿದನು. “ನಾನು ನನ್ನ ಮಗ ಶೇಲಹನನ್ನು ಆಕೆಗೆ ಮದುವೆ ಮಾಡದೆಹೋದೆ. ಈ ಕಾರಣ ನನಗಿಂತ ಆಕೆಯೇ ನೀತಿವಂತಳು,” ಎಂದುಕೊಂಡನು. ಇದಾದ ಬಳಿಕ ಅವನು ಆಕೆಯೊಡನೆ ಸಂಸರ್ಗವಿಲ್ಲದೆ ಇದ್ದನು.</verse>
				<verse number="27">ತಾಮಾರಳಿಗೆ ಹೆರಿಗೆ ಕಾಲ ಬಂದಾಗ ಆಕೆಯ ಗರ್ಭದಲ್ಲಿ ಅವಳಿಜವಳಿ ಮಕ್ಕಳಿರುವುದು ಕಂಡುಬಂದಿತು.</verse>
				<verse number="28">ಆಕೆ ಹೆರುವಾಗ ಒಂದು ಮಗು ಕೈಚಾಚಿತು. ಸೂಲಗಿತ್ತಿ, “ಇದು ಮೊದಲು ಬಂದದ್ದು,” ಎಂದು ಹೇಳಿ ಅದರ ಕೈಗೆ ಕೆಂಪು ನೂಲನ್ನು ಕಟ್ಟಿದಳು.</verse>
				<verse number="29">ಆದರೆ ಅದು ಕೈಯನ್ನು ಹಿಂದಕ್ಕೆ ತೆಗೆದುಕೊಂಡಿತು. ಅದರೊಡನೆ ಇದ್ದ ಇನ್ನೊಂದು ಕೂಸು ಹೊರಗೆ ಬಂದಿತು. ಇದನ್ನು ಕಂಡ ಸೂಲಗಿತ್ತಿ, “ನೀನು ಕಿತ್ತುಕೊಂಡು ಬಂದಿರುತ್ತೀಯಲ್ಲಾ,” ಎಂದಳು. ಈ ಕಾರಣ ಆ ಮಗುವಿಗೆ ‘ಪೆರೆಚ್’ ಎಂದು ಹೆಸರಾಯಿತು.</verse>
				<verse number="30">ತರುವಾಯ ಕೈಗೆ ಕೆಂಪುನೂಲು ಕಟ್ಟಿಸಿಕೊಂಡ ಕೂಸು ಹುಟ್ಟಿತು. ಅದಕ್ಕೆ ‘ಜೆರಹ’ ಎಂದು ಹೆಸರಾಯಿತು.</verse>
			</chapter>
			<chapter number="39">
				<verse number="1">ಅತ್ತ ಜೋಸೆಫನನ್ನು ತೆಗೆದುಕೊಂಡುಹೋದ ಇಷ್ಮಾಯೇಲ್ಯರು ಈಜಿಪ್ಟ್ ದೇಶವನ್ನು ಸೇರಿದಾಗ ಅವನನ್ನು ಈಜಿಪ್ಟಿನ ಪೋಟೀಫರ್ ಎಂಬವನಿಗೆ ಮಾರಿಬಿಟ್ಟರು. ಪೋಟೀಫರನು ಫರೋಹನ ಆಸ್ಥಾನದ ಒಬ್ಬ ಉದ್ಯೋಗಿ ಮತ್ತು ಅಂಗರಕ್ಷಕರ ದಳಪತಿ.</verse>
				<verse number="2">ಸರ್ವೇಶ್ವರ ಸ್ವಾಮಿ ಜೋಸೆಫನ ಸಂಗಡ ಇದ್ದ ಕಾರಣ, ಅವನು ಏಳಿಗೆಯಾಗಿ ತನ್ನ ಈಜಿಪ್ಟಿನ ದಣಿಯ ಮನೆಯಲ್ಲಿ ಒಬ್ಬ ಸೇವಕನಾದ.</verse>
				<verse number="3">ಜೋಸೆಫನ ಸಂಗಡ ಸರ್ವೇಶ್ವರ ಇದ್ದು ಅವನು ಮಾಡುವ ಕೆಲಸವನ್ನೆಲ್ಲ ಫಲಕಾರಿಯಾಗಿ ಮಾಡುತ್ತಾರೆಂಬುದು ಅವನ ದಣಿಗೆ ತಿಳಿಯಿತು.</verse>
				<verse number="4">ಜೋಸೆಫ್ ಅವನ ಕೃಪೆಗೆ ಪಾತ್ರನಾದ. ದಣಿ ಅವನನ್ನು ತನ್ನ ಆಪ್ತಸೇವಕನನ್ನಾಗಿ ನೇಮಿಸಿಕೊಂಡ. ಅದು ಮಾತ್ರವಲ್ಲ, ತನ್ನ ಮನೆಯಲ್ಲೇ ಮೇಲ್ವಿಚಾರಕನನ್ನಾಗಿ ಮಾಡಿ, ತನ್ನ ಆಸ್ತಿಪಾಸ್ತಿಯನ್ನೆಲ್ಲ ಅವನ ವಶಕ್ಕೆ ಒಪ್ಪಿಸಿದ.</verse>
				<verse number="5">ಹೀಗೆ ತನ್ನ ಮನೆಮಂದಿರದ ಮೇಲೂ ಆಸ್ತಿಪಾಸ್ತಿಯ ಮೇಲೂ ಜೋಸೆಫನನ್ನೇ ಆಡಳಿತಗಾರನನ್ನಾಗಿ ನೇಮಿಸಿದ. ಜೋಸೆಫನ ಪ್ರಯುಕ್ತ ಸರ್ವೇಶ್ವರ ಆ ಈಜಿಪ್ಟಿನವನ ಮನೆತನವನ್ನು ಹರಸಿದರು. ಮನೆಯಲ್ಲೂ ಸರ್ವೇಶ್ವರ ಸ್ವಾಮಿಯ ಆಶೀರ್ವಾದವಿತ್ತು.</verse>
				<verse number="6">ಪೋಟೀಫರನು ಹೀಗೆ ತನ್ನದನ್ನೆಲ್ಲ ಜೋಸೆಫನ ವಶಕ್ಕೆ ಒಪ್ಪಿಸಿ, ‘ಅವನು ಇದ್ದಾನಲ್ಲಾ’ ಎಂದುಕೊಂಡು, ತಾನು ತಿನ್ನುತ್ತಿದ್ದ ಆಹಾರ ಒಂದನ್ನು ಬಿಟ್ಟು, ಬೇರೆ ಏನನ್ನೂ ಕುರಿತು ಚಿಂತಿಸದೆ ಇದ್ದ.</verse>
				<verse number="7">ಜೋಸೆಫನದು ಸೊಗಸಾದ ಮೈಕಟ್ಟು, ಸುಂದರವಾದ ರೂಪು. ಹೀಗಿರಲು ಅವನ ದಣಿಯ ಪತ್ನಿ ಅವನ ಮೇಲೆ ಕಣ್ಣುಹಾಕಿದಳು. \ನನ್ನೊಡನೆ ಹಾಸಿಗೆಗೆ ಬಾ,” ಎಂದು ಕರೆದಳು.</verse>
				<verse number="8">ಜೋಸೆಫನು ಒಪ್ಪಲಿಲ್ಲ. “ನನ್ನ ಒಡೆಯ ತನ್ನ ಆಸ್ತಿಪಾಸ್ತಿಯನ್ನೆಲ್ಲ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ನಾನಿರುವುದರಿಂದ ಮನೆಯ ಎಲ್ಲ ವಿಷಯಗಳಲ್ಲಿ ನಿಶ್ಚಿಂತರಾಗಿದ್ದಾರೆ.</verse>
				<verse number="9">ಈ ಮನೆಯಲ್ಲಿ ನನಗಿಂತ ಹೆಚ್ಚಿನ ಅಧಿಕಾರ ಪಡೆದವರು ಒಬ್ಬರೂ ಇಲ್ಲ; ನಿಮ್ಮನ್ನು ಬಿಟ್ಟು ಮಿಕ್ಕ ಎಲ್ಲವನ್ನು ನನಗೆ ಅಧೀನಮಾಡಿದ್ದಾರೆ. ನೀವು ಅವರ ಧರ್ಮಪತ್ನಿ ಅಲ್ಲವೆ? ಹೀಗಿರುವಲ್ಲಿ, ನಾನು ಇಂತಹ ಮಹಾದುಷ್ಕೃತ್ಯವೆಸಗಿ ದೇವರಿಗೆ ವಿರುದ್ಧ ಹೇಗೆ ಪಾಪಮಾಡಲಿ?” ಎಂದು ಆಕೆಗೆ ಉತ್ತರಕೊಟ್ಟ.</verse>
				<verse number="10">ಆಕೆ ಜೋಸೆಫನ ಸಂಗಡ ದಿನದಿನವೂ ಅದೇ ಮಾತನ್ನು ಎತ್ತುತ್ತಿದ್ದಳು. ಆದರೆ ಅವನು ಅವಳಿಗೆ ಕಿವಿಗೊಡಲಿಲ್ಲ. ಇವಳ ಸಂಸರ್ಗಕ್ಕಾಗಲಿ ಅವಳ ಬಳಿ ಇರುವುದಕ್ಕಾಗಲಿ ಒಪ್ಪಲಿಲ್ಲ.</verse>
				<verse number="11">ಇಂತಿರಲು, ಒಂದು ದಿನ ಜೋಸೆಫನು ತನ್ನ ಕೆಲಸದ ಮೇಲೆ ಬಂದಾಗ ಮನೆಯ ಸೇವಕರಾರೂ ಒಳಗೆ ಇರಲಿಲ್ಲ. ಆಕೆ ಅವನ ಬಟ್ಟೆಯನ್ನು ಹಿಡುಕೊಂಡು “ಹಾಸಿಗೆಗೆ ಬಾ,” ಎಂದು ಕರೆದಳು. ಅವನು ತನ್ನ ಬಟ್ಟೆಯನ್ನು ಅವಳ ಕೈಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದ.</verse>
				<verse number="12">“ಬಟ್ಟೆಯನ್ನು ನನ್ನ ಕೈಯಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋಗಿಬಿಟ್ಟನಲ್ಲಾ!” ಎಂದುಕೊಂಡ ಆಕೆ,</verse>
				<verse number="13">ಮನೆಯ ಸೇವಕರನ್ನು ಕರೆದಳು.</verse>
				<verse number="14">“ನೋಡಿ, ನನ್ನ ಯಜಮಾನರು ಮಾಡಿರುವ ಕೆಲಸ, ಒಬ್ಬ ಹಿಬ್ರಿಯನನ್ನು ಮನೆಗೆ ಸೇರಿಸಿಕೊಂಡು ನಮ್ಮನ್ನು ಅವಮಾನಕ್ಕೆ ಗುರಿಮಾಡಿದ್ದಾರೆ. ಅವನು ಅತ್ಯಾಚಾರಕ್ಕಾಗಿ ನನ್ನ ಹತ್ತಿರಕ್ಕೆ ಬಂದ; ನಾನು ಗಟ್ಟಿಯಾಗಿ ಕೂಗಿಕೊಂಡೆ.</verse>
				<verse number="15">ನಾನು ಕೂಗುವುದನ್ನು ಕೇಳಿ ತನ್ನ ಬಟ್ಟೆಯನ್ನು ನನ್ನ ಬಳಿಯಲ್ಲೇ ಬಿಟ್ಟು ತಪ್ಪಿಸಿಕೊಂಡು ಓಡಿಹೋದ,” ಎಂದು ಅವರಿಗೆ ಹೇಳಿದಳು.</verse>
				<verse number="16">ಜೋಸೆಫನ ದಣಿ ಮನೆಗೆ ಬರುವವರೆಗೂ ಆ ಬಟ್ಟೆಯನ್ನು ತನ್ನಲ್ಲೇ ಇಟ್ಟುಕೊಂಡಿದ್ದಳು.</verse>
				<verse number="17">ಪತಿ ಬಂದಾಗ ಆಕೆ ಅವನಿಗೆ ಅದೇ ಮಾತನ್ನು ಹೇಳುತ್ತಾ, “ನೀವು ಮನೆಗೆ ಸೇರಿಸಿಕೊಂಡ ಆ ಹಿಬ್ರಿಯ ಸೇವಕನು ನನ್ನನ್ನು ಮಾನಭಂಗಪಡಿಸುವುದಕ್ಕಾಗಿ ನನ್ನ ಬಳಿಗೆ ಬಂದ. ನಾನು ಕೂಗಿಕೊಂಡೆ.</verse>
				<verse number="18">ಕೂಗುತ್ತಲೇ ತನ್ನ ಬಟ್ಟೆಯನ್ನು ಬಿಟ್ಟು ತಪ್ಪಿಸಿಕೊಂಡು ಓಡಿಹೋದ,” ಎಂದು ದೂರು ಇತ್ತಳು.</verse>
				<verse number="19">“ನಿಮ್ಮ ಸೇವಕ ನನಗೆ ಹೀಗೆ ಮಾಡಿದ,” ಎಂಬ ಆಕೆಯ ಮಾತನ್ನು ಕೇಳಿ ಜೋಸೆಫನ ದಣಿ ಕಿಡಿಕಿಡಿಯಾದ.</verse>
				<verse number="20">ಅವನನ್ನು ಬಂಧಿಸಿದ. ರಾಜಖೈದಿಗಳನ್ನು ಕಟ್ಟಿಹಾಕಿಸುತ್ತಿದ್ದ ಸೆರೆಮನೆಯಲ್ಲಿ ಅವನನ್ನು ಹಾಕಿಸಿದ. ಜೋಸೆಫನು ಸೆರೆಯಲ್ಲಿ ಇರಬೇಕಾಯಿತು.</verse>
				<verse number="21">ಆದರೂ ಸರ್ವೇಶ್ವರ, ಜೋಸೆಫನ ಸಂಗಡ ಇದ್ದರು. ಅವನಿಗೆ ಅಪಾರ ಪ್ರೀತಿ ತೋರಿಸಿ, ಅವನಿಗೆ ಸೆರೆಯಜಮಾನನ ದಯೆ ದೊರಕುವಂತೆ ಮಾಡಿದರು.</verse>
				<verse number="22">ಆ ಸೆರೆಯಜಮಾನ ಸೆರೆಯಲ್ಲಿದ್ದ ಎಲ್ಲರನ್ನು ಜೋಸೆಫನ ವಶಕ್ಕೆ ಬಿಟ್ಟನು. ಅಲ್ಲಿಯ ಕೆಲಸಕಾರ್ಯವೆಲ್ಲ ಜೋಸೆಫನ ನೇತೃತ್ವದಲ್ಲಿ ನಡೆಯುವಂತಾಯಿತು.</verse>
				<verse number="23">ಸರ್ವೇಶ್ವರ ಜೋಸೆಫನೊಂದಿಗೆ ಇದ್ದರು. ಅವನು ಕೈಗೊಂಡ ಕೆಲಸವೆಲ್ಲ ಜಯವಾಗುವಂತೆ ಮಾಡುತ್ತಿದ್ದರು. ಈ ಕಾರಣ ಸೆರೆಮನೆಯ ಯಜಮಾನ ಅಲ್ಲಿಯ ಎಲ್ಲ ವಿಷಯದಲ್ಲೂ ನಿಶ್ಚಿಂತನಾಗಿದ್ದನು.</verse>
			</chapter>
			<chapter number="40">
				<verse number="1">ಈ ಘಟನೆಗಳಾದ ಬಳಿಕ ಈಜಿಪ್ಟಿನ ಅರಸನಾದ ಫರೋಹನ ಮುಖ್ಯಪಾನದಾಯಕ ಮತ್ತು ಮುಖ್ಯ ಅಡಿಗೆಭಟ್ಟ ಯಾವುದೋ ವಿಷಯದಲ್ಲಿ ತಮ್ಮ ದಣಿಗೆ ದ್ರೋಹಮಾಡಿದ್ದರು.</verse>
				<verse number="2">ಫರೋಹನು ಆ ಇಬ್ಬರು ನೌಕರರ ಮೇಲೆ, ಅಂದರೆ ಪಾನಸೇವಕರಲ್ಲಿ ಮುಖ್ಯಸ್ಥನ ಮೇಲೆಯೂ ಅಡಿಗೆಭಟ್ಟರ ಮುಖ್ಯಸ್ಥನ ಮೇಲೆಯೂ ಕೋಪಗೊಂಡು,</verse>
				<verse number="3">ಅವರನ್ನು ಅಂಗರಕ್ಷಕರ ದಳಪತಿಯ ವಠಾರದಲ್ಲಿದ್ದ ಸೆರೆಯಲ್ಲಿ ಹಾಕಿಸಿದ್ದನು.</verse>
				<verse number="4">ದಳಪತಿ ಜೋಸೆಫನನ್ನು ಅವರ ಉಪಚಾರಕ್ಕೆ ನೇಮಿಸಿದ್ದನು. ಜೋಸೆಫನು ಅವರಿಗೆ ಸೇವೆಮಾಡಬೇಕಾಗಿತ್ತು.</verse>
				<verse number="5">ಕೆಲವು ಕಾಲವದ ಮೇಲೆ, ಆ ಇಬ್ಬರು ನೌಕರರಿಗೂ ಅಂದರೆ, ಈಜಿಪ್ಟಿನ ಅರಸ ಸೆರೆಗೆ ಹಾಕಿಸಿದ್ದ ಪಾನಸೇವಕನಿಗೂ ಅಡಿಗೆಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರ ಕನಸುಗಳಿಗೆ ಬೇರೆಬೇರೆ ಅರ್ಥವಿತ್ತು.</verse>
				<verse number="6">ಬೆಳಿಗ್ಗೆ ಜೋಸೆಫನು ಅವರ ಬಳಿಗೆ ಬಂದಾಗ ಚಿಂತಾಕ್ರಾಂತರಾಗಿರುವುದು ಕಾಣಿಸಿತು.</verse>
				<verse number="7">ಅದನ್ನು ಗಮನಿಸಿದ ಜೋಸೆಫನು, “ಈ ದಿನ ನಿಮ್ಮ ಮುಖ ಕಳೆಗುಂದಿದೆ ಏಕೆ?” ಎಂದು ತನ್ನೊಂದಿಗೆ ಸೆರೆಯಲ್ಲಿದ್ದ ಆ ನೌಕರರನ್ನು ಕೇಳಿದ.</verse>
				<verse number="8">ಅವರು, “ನಮಗೆ ಸ್ವಪ್ನಬಿತ್ತು; ಅದರ ಅರ್ಥ ಹೇಳುವವರು ಯಾರೂ ಇಲ್ಲ,” ಎಂದರು. ಜೋಸೆಫನು ಅವರಿಗೆ, “ಸ್ವಪ್ನಗಳ ಅರ್ಥ ದೇವರಿಂದ ದೊರಕಬಹುದಲ್ಲವೆ? ದಯವಿಟ್ಟು ನಿಮ್ಮ ಸ್ವಪ್ನಗಳನ್ನು ನನಗೆ ತಿಳಿಸಿ,” ಎಂದ.</verse>
				<verse number="9">ಆಗ ಆ ಮುಖ್ಯ ಪಾನಸೇವಕ ಜೋಸೆಫನಿಗೆ, “ನನ್ನ ಕನಸಿನಲ್ಲಿ ಒಂದು ದ್ರಾಕ್ಷಾಲತೆ ನನ್ನೆದುರಿಗೆ ಇರುವುದನ್ನು ಕಂಡೆ.</verse>
				<verse number="10">ಅದಕ್ಕೆ ಮೂರು ಕವಲುಗಳಿದ್ದವು. ಅದು ಚಿಗುರುತ್ತಲೇ ಹೂಗಳನ್ನು ಬಿಟ್ಟಿತು. ಆ ಹೂಗಳು ಗೊಂಚಲುಗಳಾಗಿ ಹಣ್ಣಾದವು.</verse>
				<verse number="11">ಫರೋಹನ ಪಾನಪಾತ್ರೆ ನನ್ನ ಕೈಯಲ್ಲಿತ್ತು. ನಾನು ಆ ಗೊಂಚಲುಗಳನ್ನು ಕೊಯ್ದು ಪಾತ್ರೆಯಲ್ಲಿ ಹಿಂಡಿ ಆ ಪಾತ್ರೆಯನ್ನು ಫರೋಹನ ಕೈಗೆ ಒಪ್ಪಿಸಿದೆ,” ಎಂದು ಹೇಳಿದ.</verse>
				<verse number="12">ಅದಕ್ಕೆ ಜೋಸೆಫನು, “ಆ ಕನಸಿನ ಅರ್ಥ ಇದು: ಆ ಮೂರು ಕೊಂಬೆಗಳು ಮೂರು ದಿನಗಳು;</verse>
				<verse number="13">ಇನ್ನು ಮೂರು ದಿನಗಳೊಳಗೆ ನೀನು ತಲೆಯೆತ್ತುವಂತೆ ಫರೋಹನು ಮಾಡುವನು; ನಿನ್ನನ್ನು ಮರಳಿ ನೌಕರಿಗೆ ಸೇರಿಸಿಕೊಳ್ಳುವನು; ನೀನು ಮುಂದಿನಂತೆಯೇ ಫರೋಹನಿಗೆ ಪಾನಸೇವಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುವೆ.</verse>
				<verse number="14">ಆದರೆ ನೀನು ಸುಖದಿಂದಿರುವಾಗ ನನ್ನನ್ನು ಮರೆಯದೆ ನನಗೊಂದು ಉಪಕಾರ ಮಾಡು. ಫರೋಹನಿಗೆ ನನ್ನ ವಿಷಯ ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡುಗಡೆಮಾಡು.</verse>
				<verse number="15">ನಾನು ಹಿಬ್ರಿಯ ದೇಶದವನು. ಕೆಲವರು ನನ್ನನ್ನು ಗುಲಾಮನನ್ನಾಗಿ ಈ ದೇಶಕ್ಕೆ ಹಿಡಿದುತಂದರು. ಇಲ್ಲಿಯೂ ಸೆರೆಗೆ ಗುರಿಯಾಗಿಸುವಂಥ ದ್ರೋಹವನ್ನು ನಾನೇನು ಮಾಡಿಲ್ಲ,” ಎಂದನು.</verse>
				<verse number="16">ಜೋಸೆಫನು ಹೇಳಿದ ಅರ್ಥ ಶುಭಕರ ಆದುದೆಂದು ತಿಳಿದ ಆ ಮುಖ್ಯ ಅಡಿಗೆಭಟ್ಟ ಅವನಿಗೆ, “ನಾನು ಕಂಡ ಕನಸನ್ನು ಹೇಳುತ್ತೇನೆ, ಕೇಳು: ಸೊಗಸಾದ ರೊಟ್ಟಿ ಪದಾರ್ಥಗಳು ತುಂಬಿದ್ದ ಮೂರು ಪುಟ್ಟಿಗಳು ನನ್ನ ತಲೆಯ ಮೇಲೆ ಇದ್ದವು.</verse>
				<verse number="17">ಮೇಲಣ ಪುಟ್ಟಿಯಲ್ಲಿ ಫರೋಹನಿಗಾಗಿಯೆ ವಿಧವಿಧವಾದ ರೊಟ್ಟಿ ಪದಾರ್ಥಗಳು ಇದ್ದವು. ಪಕ್ಷಿಗಳು ಬಂದು ಅವುಗಳನ್ನು ನನ್ನ ತಲೆಯ ಮೇಲಿದ್ದ ಪುಟ್ಟಿಯಿಂದಲೆ ತಿನ್ನುತ್ತಿದ್ದವು,” ಎಂದು ಹೇಳಿದ.</verse>
				<verse number="18">ಅದಕ್ಕೆ ಜೋಸೆಫನು, “ನಿನ್ನ ಕನಸಿನ ಅರ್ಥ ಇದು: ಆ ಮೂರು ಪುಟ್ಟಿಗಳೇ ಮೂರು ದಿನಗಳು.</verse>
				<verse number="19">ಇನ್ನು ಮೂರು ದಿನದೊಳಗೆ ಫರೋಹನು ನಿನ್ನ ಕುತ್ತಿಗೆಗೆ ನೇಣುಹಾಕಿಸುವನು; ಮರಕ್ಕೆ ತೂಗುಹಾಕಿಸುವನು; ಹಕ್ಕಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವುವು,” ಎಂದನು.</verse>
				<verse number="20">ಮೂರನೆಯ ದಿನ ಫರೋಹನು ಹುಟ್ಟಿದ ಹಬ್ಬದಿನವಾಗಿತ್ತು. ಅವನು ತನ್ನ ಪರಿವಾರದವರಿಗೆಲ್ಲ ಔತಣವನ್ನು ಏರ್ಪಡಿಸಿದ್ದ. ಮುಖ್ಯ ಪಾನಸೇವಕನನ್ನೂ ಮುಖ್ಯ ಅಡಿಗೆಭಟ್ಟನನ್ನೂ ಬಿಡಿಸಿ ಬರಮಾಡಿದ, ತನ್ನ ಪರಿವಾರದವರ ಮಧ್ಯದಲ್ಲೆ ಅವರ ತಲೆಯನ್ನು ಎತ್ತಿಸಿದ.</verse>
				<verse number="21">ಪಾನಸೇವಕರ ಮುಖ್ಯಸ್ಥನನ್ನು ಪುನಃ ಅವನ ನೌಕರಿಗೆ ಏರಿಸಿದ; ಅವನು ಪಾನಪಾತ್ರೆಯನ್ನು ಫರೋಹನ ಕೈಗೆ ಒಪ್ಪಿಸುವಂಥವನಾದ.</verse>
				<verse number="22">ಆದರೆ ಮುಖ್ಯ ಅಡಿಗೆಭಟ್ಟನನ್ನು ನೇಣು ಹಾಕಿಸಿದ. ಹೀಗೆ ಜೋಸೆಫನು ಹೇಳಿದ ಅರ್ಥ ಕಾರ್ಯಗತವಾಯಿತು.</verse>
				<verse number="23">ಆದರೆ ಮುಖ್ಯ ಪಾನಸೇವಕನು ಜೋಸೆಫನನ್ನು ನೆನಪಿಗೆ ತಂದುಕೊಳ್ಳಲಿಲ್ಲ, ಅವನನ್ನು ಮರೆತೇಬಿಟ್ಟ.</verse>
			</chapter>
			<chapter number="41">
				<verse number="1">ಎರಡು ವರ್ಷಗಳಾದ ಮೇಲೆ ಫರೋಹನಿಗೆ ಒಂದು ಕನಸುಬಿತ್ತು. ಆ ಕನಸಿನಲ್ಲಿ ಅವನು ನೈಲ್ ನದಿಯ ತೀರದಲ್ಲಿ ನಿಂತಿದ್ದನು.</verse>
				<verse number="2">ಆಗ ಅಚ್ಚುಕಟ್ಟಾದ ಏಳು ಕೊಬ್ಬಿದ ಹಸುಗಳು ಆ ನದಿಯೊಳಗಿಂದ ಬಂದು ಜೊಂಡು ಹುಲ್ಲಿನಲ್ಲಿ ಮೇಯುತ್ತಿದ್ದವು.</verse>
				<verse number="3">ಅವುಗಳ ಹಿಂದೆಯೇ ಒಣಕಲಾದ ಏಳು ಬಡ ಹಸುಗಳು ನದಿಯೊಳಗಿಂದ ಬಂದು ಮೊದಲು ಕಾಣಿಸಿದ ಹಸುಗಳ ಹತ್ತಿರ ನದಿಯ ತೀರದಲ್ಲೇ ನಿಂತವು.</verse>
				<verse number="4">ಒಣಕಲಾದ ಈ ಬಡ ಹಸುಗಳು ಅಚ್ಚುಕಟ್ಟಾದ ಆ ಕೊಬ್ಬಿದ ಹಸುಗಳನ್ನು ತಿಂದುಬಿಟ್ಟವು. ಅಷ್ಟರಲ್ಲಿ ಫರೋಹನಿಗೆ ಎಚ್ಚರವಾಯಿತು.</verse>
				<verse number="5">ಫರೋಹನಿಗೆ ಮತ್ತೆ ನಿದ್ರೆ ಹತ್ತಿದಾಗ ಅವನಿಗೆ ಇನ್ನೊಂದು ಕನಸುಬಿತ್ತು. ಅದರಲ್ಲಿ ಕಾಳುತುಂಬಿದ ಏಳು ಬಲಿತ ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿದವು.</verse>
				<verse number="6">ಅವುಗಳ ಹಿಂದೆಯೇ ಮೂಡಣಗಾಳಿಯಿಂದ ಒಣಗಿ, ಬತ್ತಿಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.</verse>
				<verse number="7">ಬತ್ತಿಹೋಗಿದ್ದ ಈ ತೆನೆಗಳು, ಕಾಳುತುಂಬಿದ್ದ ಆ ಏಳು ಬಲಿತ ತೆನೆಗಳನ್ನು ನುಂಗಿಬಿಟ್ಟವು. ಅಷ್ಟರೊಳಗೆ ಫರೋಹನು ಎಚ್ಚೆತ್ತು, ತಾನು ಕಂಡದ್ದು ಕನಸೆಂದು ತಿಳಿದುಕೊಂಡ.</verse>
				<verse number="8">ಬೆಳಿಗ್ಗೆ ಅವನ ಮನಸ್ಸು ಕಳವಳಗೊಂಡು ಇತ್ತು. ಈಜಿಪ್ಟ್ ದೇಶದ ಎಲ್ಲ ಜೋಯಿಸರನ್ನೂ ವಿದ್ವಾಂಸರನ್ನೂ ಬರಮಾಡಿದ. ಅವರಿಗೆ ತನ್ನ ಕನಸನ್ನು ವಿವರಿಸಿದ. ಅದರ ಅರ್ಥವನ್ನು ಅವನಿಗೆ ಹೇಳಬಲ್ಲವರು ಯಾರೂ ಸಿಕ್ಕಲಿಲ್ಲ.</verse>
				<verse number="9">ಆಗ ಪಾನಸೇವಕರಲ್ಲಿ ಮುಖ್ಯಸ್ಥನು ಫರೋಹನಿಗೆ, “ಒಡೆಯಾ, ಈ ದಿನತಾನೆ ನನ್ನ ನೆನಪಿಗೆ ಬರುತ್ತಿದೆ.</verse>
				<verse number="10">ತಾವು ತಮ್ಮ ಸೇವಕರ ಮೇಲೆ ಸಿಟ್ಟುಗೊಂಡು, ನನ್ನನ್ನೂ ಆ ಮುಖ್ಯ ಅಡಿಗೆಭಟ್ಟನನ್ನೂ ದಳಪತಿಯ ವಠಾರದಲ್ಲಿ ಇರುವ ಸೆರೆಯಲ್ಲಿ ಇಟ್ಟಿದ್ದಿರಿ. ಅಲ್ಲಿದ್ದಾಗ ನಮ್ಮಿಬ್ಬರಿಗೂ ಒಂದೇ ರಾತ್ರಿಯಲ್ಲಿ ಕನಸುಬಿತ್ತು</verse>
				<verse number="11">ಒಬ್ಬೊಬ್ಬನ ಕನಸಿಗೂ ಬೇರೆಬೇರೆ ಅರ್ಥವಿತ್ತು.</verse>
				<verse number="12">ಹಿಬ್ರಿಯನಾದ ಒಬ್ಬ ಯುವಕ ನಮ್ಮ ಸಂಗಡ ಅಲ್ಲಿದ್ದ. ಅವನು ದಳಪತಿಯವರ ಸೇವಕ. ನಾವು ನಮ್ಮ ಕನಸನ್ನು ಅವನಿಗೆ ತಿಳಿಸಿದೆವು. ಅವನು ಆ ಕನಸುಗಳಿಗೆ ಸರಿಯಾದ ಅರ್ಥವನ್ನು ಹೇಳಿದ.</verse>
				<verse number="13">ಅದು ಮಾತ್ರವಲ್ಲ, ಅವನು ಹೇಳಿದ ಪ್ರಕಾರವೇ ಆಯಿತು. ನನಗೆ ನೌಕರಿ ಮತ್ತೆ ದೊರಕಿತು. ಆ ಮುಖ್ಯ ಅಡಿಗೆಭಟ್ಟನನ್ನೋ ನೇಣುಹಾಕಲಾಯಿತು,’ ಎಂದು ಸನ್ನಿಧಿಯಲ್ಲಿ ಅರಿಕೆಮಾಡಿದ.</verse>
				<verse number="14">ಇದನ್ನು ಕೇಳಿದ ಫರೋಹನು ಜೋಸೆಫನನ್ನು ಕರೆತರುವಂತೆ ಆಳುಗಳನ್ನು ಕಳಿಸಿದ. ಅವರು ಬಂದು ಅವನನ್ನು ಸೆರೆಯಿಂದ ತ್ವರೆಯಾಗಿ ಬಿಡುಗಡೆ ಮಾಡಿದರು. ಜೋಸೆಫನು ಕ್ಷೌರಮಾಡಿಕೊಂಡು, ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಯಲ್ಲಿ ಹಾಜರಾದ.</verse>
				<verse number="15">ಫರೋಹನು ಅವನಿಗೆ, “ನಾನು ಒಂದು ಕನಸುಕಂಡೆ, ಅದರ ಅರ್ಥ ಹೇಳಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳಬಲ್ಲೆ ಎಂಬ ಸಮಾಚಾರ ಕೇಳಿದ್ದೇನೆ,” ಎಂದ.</verse>
				<verse number="16">ಜೋಸೆಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು, ಫರೋಹ ಆದ ನಿಮಗೆ ತೃಪ್ತಿಕರವಾದ ಉತ್ತರಕೊಡಬಲ್ಲರು,” ಎಂದು ಹೇಳಿದ.</verse>
				<verse number="17">ಆಗ ಫರೋಹನು ಜೋಸೆಫನಿಗೆ, “ಕನಸಿನಲ್ಲಿ ನಾನು ನೈಲ್ ನದಿಯ ತೀರದಲ್ಲಿ ನಿಂತಿದ್ದೆ.</verse>
				<verse number="18">ನದಿಯೊಳಗಿಂದ ಅಚ್ಚುಕಟ್ಟಾದ ಏಳು ಕೊಬ್ಬಿದ ಹಸುಗಳು ಬಂದು ಜೊಂಡುಹುಲ್ಲಿನಲ್ಲಿ ಮೇಯುತ್ತಿದ್ದವು.</verse>
				<verse number="19">ಅವುಗಳ ಹಿಂದೆಯೆ ಬಹಳ ಒಣಕಲಾದ ಹಾಗೂ ಸಣಕಲಾದ, ಬೇರೆ ಏಳು ಬಡಹಸುಗಳು ಬಂದವು. ಅಂಥ ಬಡಹಸುಗಳನ್ನು ನಾನು ಈಜಿಪ್ಟಿನಲ್ಲಿ ಎಲ್ಲೂ ನೋಡಿದ್ದಿಲ್ಲ.</verse>
				<verse number="20">ಅದಲ್ಲದೆ, ಸಣಕಲಾಗಿದ್ದ ಆ ಬಡಹಸುಗಳು ಮೊದಲೇ ಕಾಣಿಸಿದ ಆ ಏಳು ಕೊಬ್ಬಿನ ಹಸುಗಳನ್ನು ತಿಂದುಬಿಟ್ಟವು.</verse>
				<verse number="21">ತಿಂದರೂ ತಿಂದಂತೆಯೇ ತೋರಲಿಲ್ಲ. ಮೊದಲಿದ್ದಂತೆಯೇ ಬಡಕಲಾಗಿದ್ದವು. ಅಷ್ಟರ ಒಳಗೆ ನನಗೆ ಎಚ್ಚರವಾಯಿತು.</verse>
				<verse number="22">ನನಗೆ ಬಿದ್ದ ಇನ್ನೊಂದು ಕನಸಿನೊಳಗೆ ಕಾಳುತುಂಬಿದ್ದ ಏಳು ಬಲಿತ ತೆನೆಗಳು ಒಂದೇ ದಂಟಿನಲ್ಲಿ ಹುಟ್ಟಿಬಂದವು.</verse>
				<verse number="23">ಅವುಗಳ ಹಿಂದೆಯೆ, ಮೂಡಣ ಗಾಳಿಯಿಂದ ಒಣಗಿ, ಬತ್ತಿ, ಕೆಟ್ಟುಹೋಗಿದ್ದ ಬೇರೆ ಏಳು ತೆನೆಗಳು ಮೊಳೆತು ಬಂದವು.</verse>
				<verse number="24">ಬತ್ತಿಹೋಗಿದ್ದ ತೆನೆಗಳು ಕಾಳು ತುಂಬಿದ್ದ ಆ ಏಳು ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆ; ಅವುಗಳ ಅರ್ಥವನ್ನು ವಿವರಿಸಿ ಹೇಳಲು ಅವರಲ್ಲಿ ಯಾರಿಂದಲೂ ಆಗಲಿಲ್ಲ.”</verse>
				<verse number="25">ಜೋಸೆಫನು ಫರೋಹನಿಗೆ, “ತಾವು ಕಂಡ ಎರಡು ಕನಸುಗಳ ವಿಷಯ ಒಂದೇ. ದೇವರು ಮಾಡಬೇಕೆಂದಿರುವುದನ್ನು ಇವುಗಳ ಮೂಲಕ ತಮಗೆ ತಿಳಿಸಿದ್ದಾರೆ.</verse>
				<verse number="26">ಆ ಏಳು ಒಳ್ಳೆಯ ಹಸುಗಳೇ ಏಳು ವರ್ಷಗಳು; ಆ ಏಳು ಒಳ್ಳೆಯತೆನೆಗಳೂ ಏಳು ವರ್ಷಗಳು; ಎರಡು ಕನಸುಗಳ ಅರ್ಥ ಒಂದೇ.</verse>
				<verse number="27">ಒಳ್ಳೆಯ ಹಸುಗಳ ಹಿಂದೆ ಬಂದ ಒಣಕಲಾಗಿದ್ದ ಆ ಏಳು ಬಡಹಸುಗಳು ಮತ್ತು ಮೂಡಣ ಗಾಳಿಯಿಂದ ಕೆಟ್ಟುಹೋಗಿದ್ದ ಆ ಏಳು ಕಾಳಿಲ್ಲದ ತೆನೆಗಳು ಬರವುಂಟಾಗುವ ಏಳು ವರ್ಷಗಳನ್ನು ಸೂಚಿಸುತ್ತವೆ.</verse>
				<verse number="28">ನಾನು ತಮಗೆ ಅರಿಕೆಮಾಡಿದಂತೆ ದೇವರು ಮಾಡಬೇಕೆಂದು ಇರುವುದನ್ನು ತಮಗೆ ತಿಳಿಸಿದ್ದಾರೆ.</verse>
				<verse number="29">ಈಜಿಪ್ಟ್ ದೇಶದಲ್ಲೆಲ್ಲ ಬಹುವಿಶೇಷವಾದ ಏಳು ಸುಭಿಕ್ಷ ವರ್ಷಗಳೂ</verse>
				<verse number="30">ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವುವು. ಆಗ ಈಜಿಪ್ಟ್ ದೇಶದ ಅವರು ಮೊದಲಿದ್ದ ಆ ಸುಭಿಕ್ಷವನ್ನು ಮರೆತುಬಿಡುವರು; ಆ ಬರದಿಂದ ದೇಶವು ಹಾಳಾಗಿಹೋಗುವುದು.</verse>
				<verse number="31">ಮುಂದೆ ಬರಲಿರುವ ಕ್ಷಾಮವು ಅತ್ಯಂತ ಘೋರಾವಾಗಿರುವುದು; ಮೊದಲಿದ್ದ ಸಮೃದ್ಧಿಯ ಗುರುತೇ ಇಲ್ಲದೆ ಹೋಗುವುದು.</verse>
				<verse number="32">ದೇವರು ಈ ಕಾರ್ಯವನ್ನು ನಿರ್ಧರಿಸಿದ್ದಾರೆ; ಇದು ಬೇಗ ಬರಲಿದೆಯೆಂದು ತಿಳಿದುಕೊಳ್ಳಬೇಕು. ಏಕೆಂದರೆ ನಿಮಗೆ ಇಮ್ಮಡಿ ಕನಸುಬಿದ್ದಿದೆ.</verse>
				<verse number="33">“ಆದುದರಿಂದ ತಾವು ವಿವೇಕಿಯೂ ಬುದ್ಧಿವಂತನೂ ಆದ ಒಬ್ಬನನ್ನು ಆರಿಸಿಕೊಂಡು ಅವನನ್ನು ಈಜಿಪ್ಟ್ ದೇಶದ ಮೇಲೆ ಆಧಿಕಾರಿಯನ್ನಾಗಿ ನೇಮಿಸಬೇಕು.</verse>
				<verse number="34">ಅದೂ ಅಲ್ಲದೆ, ದೇಶದ ಎಲ್ಲ ಭಾಗಗಳಲ್ಲೂ ಗುಮಾಸ್ತರನ್ನು ನೇಮಿಸಿ ಅವರ ಮೂಲಕ ಸುಭಿಕ್ಷವಾದ ಏಳು ವರ್ಷಗಳಲ್ಲಿ ದೇಶದ ಬೆಳೆಯಲ್ಲಿ ಐದನೆಯ ಒಂದು ಪಾಲನ್ನು ಕಂದಾಯವಾಗಿ ಎತ್ತಬೇಕು.</verse>
				<verse number="35">ಮುಂದಣ ಒಳ್ಳೆಯ ವರ್ಷಗಳಲ್ಲಿ ಆಹಾರ ಪದಾರ್ಥಗಳನ್ನೂ ದವಸಧಾನ್ಯಗಳನ್ನೂ ಶೇಖರಿಸಿ ಪಟ್ಟಣಗಳಲ್ಲಿ ಜೋಪಾನವಾಗಿಡುವಂತೆ ತಾವು ಆಜ್ಞಾಪಿಸಬೇಕು.</verse>
				<verse number="36">ಹೀಗೆ ಆಹಾರ ಪದಾರ್ಥಗಳನ್ನು ಶೇಖರಿಸುವುದರಿಂದ ಈಜಿಪ್ಟ್ ದೇಶದಲ್ಲಿ ದುರ್ಭಿಕ್ಷವುಂಟಾಗುವ ಏಳು ವರ್ಷಗಳಲ್ಲಿ ಜನರು ಕ್ಷಾಮದಿಂದ ಸಾಯುವುದಿಲ್ಲ,” ಎಂದು ಹೇಳಿದನು.</verse>
				<verse number="37">ಜೋಸೆಫನು ಸೂಚಿಸಿದ ಯೋಜನೆ ಫರೋಹನಿಗೂ ಅವನ ಪರಿವಾರದವರಿಗೂ ಒಳ್ಳೆಯದೆಂದು ತೋರಿತು.</verse>
				<verse number="38">ಫರೋಹನು ತನ್ನ ಪರಿವಾರದವರಿಗೆ, “ಈತ ದೇವರಾತ್ಮ ಪಡೆದವನು,</verse>
				<verse number="39">ಈತನಿಗಿಂತ ಯೋಗ್ಯವಾದ ವ್ಯಕ್ತಿ ನಮಗೆ ಸಿಕ್ಕುವುದು ಸಾಧ್ಯವೆ?” ಎಂದು ಹೇಳಿ ಜೋಸೆಫನಿಗೆ, “ದೇವರೇ ನಿನಗೆ ಇದನ್ನೆಲ್ಲ ತಿಳಿಸಿರುವುದರಿಂದ ನಿನಗೆ ಸಮಾನವಾದ ಬುದ್ಧಿವಿವೇಕಗಳುಳ್ಳ ವ್ಯಕ್ತಿ ಯಾವನೂ ಇಲ್ಲ.</verse>
				<verse number="40">ನೀನೇ ಅರಮನೆಯಲ್ಲಿ ಮುಖ್ಯಾಧಿಕಾರಿಯಾಗಿರಬೇಕು; ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರು ನಡೆದುಕೊಳ್ಳಬೇಕು; ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು,” ಎಂದು ಹೇಳಿದನು.</verse>
				<verse number="41">ಬಳಿಕ ಫರೋಹನು ಜೋಸೆಫನಿಗೆ, “ಇದೀಗಲೆ ಈಜಿಪ್ಟ್ ದೇಶದ ಮೇಲೆಲ್ಲ ನಿನ್ನನ್ನು ಅಧಿಕಾರಿಯನ್ನಾಗಿ ನೇಮಿಸುತ್ತಿದ್ದೇನೆ,” ಎಂದು ಹೇಳಿ</verse>
				<verse number="42">ತನ್ನ ಬೆರಳಿನಿಂದ ಮುದ್ರಿಕೆಯನ್ನು ತೆಗೆದು ಜೋಸೆಫನ ಬೆರಳಿಗೆ ಇಟ್ಟನು. ಅವನಿಗೆ ಮೌಲ್ಯವಾದ ವಸ್ತ್ರಗಳನ್ನು ಹೊದಿಸಿದನು. ಕೊರಳಿಗೆ ಚಿನ್ನದ ಸರವನ್ನು ಹಾಕಿಸಿದನು.</verse>
				<verse number="43">ತನಗಿದ್ದ ಎರಡನೆಯ ರಥದಲ್ಲಿ ಕುಳ್ಳಿರಿಸಿ ಅವನ ಮುಂದೆ, “ಈತನಿಗೆ ಅಡ್ಡಬೀಳಿ,” ಎಂದು ಪ್ರಕಟನೆ ಮಾಡಿಸಿದನು. ಹೀಗೆ ಅವನನ್ನು ಈಜಿಪ್ಟ್ ದೇಶಕ್ಕೆ ಮುಖ್ಯಮಂತ್ರಿಯನ್ನಾಗಿ ನೇಮಿಸಿದನು.</verse>
				<verse number="44">ಅಷ್ಟು ಮಾತ್ರವಲ್ಲ, ಫರೋಹನು ಅವನಿಗೆ, “ಫರೋಹನಾದ ನಾನು ಹೇಳುತ್ತಿದ್ದೇನೆ: ನಿನ್ನ ಅಪ್ಪಣೆಯಿಲ್ಲದೆ ಇಡೀ ಈಜಿಪ್ಟ್ ದೇಶದಲ್ಲಿ ಯಾರೂ ಏನನ್ನೂ ಮಾಡಕೂಡದು,” ಎಂದು ಹೇಳಿದನು.</verse>
				<verse number="45">ಬಳಿಕ ಫರೋಹನು ಜೋಸೆಫನಿಗೆ ‘ಸಾಪ್ನತ್ಪನ್ನೇಹ’ ಎಂಬ ಹೊಸ ಹೆಸರಿಟ್ಟನು; ಓನ್ ಎಂಬ ಗುರುಪೀಠದ ಆಚಾರ್ಯನಾಗಿದ್ದ ಪೋಟೀಫೆರನ ಮಗಳು ಆಸನತ್ ಎಂಬಾಕೆಯನ್ನು ಅವನಿಗೆ ಮದುವೆಮಾಡಿಸಿದನು. ತರುವಾಯ ಜೋಸೆಫನು ಈಜಿಪ್ಟ್ ದೇಶಸಂಚಾರ ಹೊರಟನು.</verse>
				<verse number="46">ಈಜಿಪ್ಟ್ ದೇಶದ ಅರಸನಾದ ಫರೋಹನ ಆಸ್ಥಾನವನ್ನು ಸೇರಿದಾಗ ಜೋಸೆಫನಿಗೆ ಮೂವತ್ತು ವರ್ಷ ವಯಸ್ಸು. ಜೋಸೆಫನು ಫರೋಹನ ಸನ್ನಿಧಿಯಿಂದ ಹೊರಟು ಈಜಿಪ್ಟ್ ದೇಶದಲ್ಲೆಲ್ಲ ಸಂಚಾರ ಮಾಡಿದನು.</verse>
				<verse number="47">ಆ ದೇಶದಲ್ಲಿ ಸುಭಿಕ್ಷದ ಏಳು ವರ್ಷಗಳಲ್ಲಿ ಭೂಮಿ ಹೇರಳವಾದ ಬೆಳೆಕೊಟ್ಟಿತು.</verse>
				<verse number="48">ಆ ಏಳು ವರ್ಷದ ಬೆಳೆಯನ್ನು ಜೋಸೆಫನು ಶೇಖರಿಸಿ ಪಟ್ಟಣಗಳಲ್ಲಿ ಇಟ್ಟನು. ಆಯಾ ಪಟ್ಟಣದ ಸುತ್ತಲಿದ್ದ ಹೊಲಗಳ ಬೆಳೆಯನ್ನು ಆಯಾ ಪಟ್ಟಣದಲ್ಲೇ ಶೇಖರಿಸಿದನು.</verse>
				<verse number="49">ಹೀಗೆ ಕೂಡಿಸಿದ ದವಸಧಾನ್ಯ ಸಮುದ್ರದ ಮರಳಿನಂತೆ ರಾಶಿರಾಶಿಯಾಗಿತ್ತು. ಲೆಕ್ಕಮಾಡುವುದಕ್ಕೂ ಆಗದೆ ಲೆಕ್ಕ ಇಡುವುದನ್ನೇ ಬಿಟ್ಟುಬಿಡಬೇಕಾಯಿತು.</verse>
				<verse number="50">ಬರಗಾಲ ಬರುವುದಕ್ಕೆ ಮುಂಚೆ ಜೋಸೆಫನಿಗೆ ಇಬ್ಬರು ಗಂಡು ಮಕ್ಕಳು ಹುಟ್ಟಿದರು. ಅವರ ತಾಯಿ ಓನ್ ಪಟ್ಟಣದ ಆಚಾರ್ಯನಾಗಿದ್ದ ಪೋಟೀಫೆರನ ಮಗಳಾದ ಆಸನತ್.</verse>
				<verse number="51">ಜೇಷ್ಠಮಗ ಹುಟ್ಟಿದಾಗ ಜೋಸೆಫನು, “ನಾನು ನನ್ನ ಕಷ್ಟದುಃಖವನ್ನೂ ತಂದೆಯ ಮನೆಯವರನ್ನೂ ಮರೆಯುವಂತೆ ದೇವರು ಮಾಡಿದ್ದಾರಲ್ಲಾ!” ಎಂದುಕೊಂಡು ಆ ಮಗುವಿಗೆ, ‘ಮನಸ್ಸೆ’ ಎಂದು ಹೆಸರಿಟ್ಟನು.</verse>
				<verse number="52">ಎರಡನೆಯ ಮಗನು ಹುಟ್ಟಿದಾಗ, ಯಾವ ದೇಶದಲ್ಲಿ ನನಗೆ ಸಂಕಷ್ಟವಿತ್ತೋ ಆ ದೇಶದಲ್ಲಿ ದೇವರು ನನಗೆ ಸಮೃದ್ಧಿಯನ್ನು ದಯಪಾಲಿಸಿದ್ದಾರೆ!” ಎಂದು ಆ ಮಗನಿಗೆ ‘ಎಫ್ರಾಯೀಮ್’ ಎಂದು ನಾಮಕರಣ ಮಾಡಿದನು.</verse>
				<verse number="53">ಈಜಿಪ್ಟ್ ದೇಶದಲ್ಲಿ ಸುಭಿಕ್ಷದ ಏಳು ವರ್ಷಗಳು ಮುಗಿದವು.</verse>
				<verse number="54">ಜೋಸೆಫನು ಹೇಳಿದ್ದ ಪ್ರಕಾರವೇ ಕ್ಷಾಮದ ಏಳು ವರ್ಷಗಳು ಪ್ರಾರಂಭವಾದವು. ಬರವು ಸುತ್ತಮುತ್ತಲಿನ ಎಲ್ಲ ದೇಶಗಳಿಗೂ ಹಬ್ಬಿತು. ಈಜಿಪ್ಟಿನಲ್ಲಿ ಮಾತ್ರ ಆಹಾರ ದೊರಕುತ್ತಿತ್ತು.</verse>
				<verse number="55">ಕ್ರಮೇಣ ಈಜಿಪ್ಟಿಗೂ ಬರ ಬಂದಾಗ ಪ್ರಜೆಗಳು ಆಹಾರಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಆಗ ಅವನು ಅವರಿಗೆ, “ಹೋಗಿ, ಜೋಸೆಫನ ಬಳಿಗೆ, ಅವನು ಹೇಳಿದಂತೆ ಮಾಡಿ,” ಎಂದು ಉತ್ತರಕೊಟ್ಟನು.</verse>
				<verse number="56">ಬರವು ದೇಶದಲ್ಲೆಲ್ಲ ಹರಡಿಕೊಂಡಾಗ ಜೋಸೆಫನು ಕಣಜಗಳನ್ನೆಲ್ಲ ತೆಗೆಸಿ, ಈಜಿಪ್ಟರಿಗೆ ಧಾನ್ಯವನ್ನು ಮಾರಿಸಿದನು. ಈಜಿಪ್ಟ್ ದೇಶದಲ್ಲಿ ಬರವು ಬಹು ಘೋರವಾಗಿತ್ತು.</verse>
				<verse number="57">ಅಂತೆಯೇ ಲೋಕದಲ್ಲೆಲ್ಲಾ ಬರವು ಭಯಂಕರವಾಗಿತ್ತು. ಎಲ್ಲ ದೇಶದವರು ಜೋಸೆಫನಿಂದ ಧಾನ್ಯ ಕೊಂಡುಕೊಳ್ಳಲು ಈಜಿಪ್ಟಿಗೆ ಬರುತ್ತಿದ್ದರು.</verse>
			</chapter>
			<chapter number="42">
				<verse number="1">ಈಜಿಪ್ಟಿನಲ್ಲಿ ದವಸಧಾನ್ಯ ದೊರಕುತ್ತದೆ ಎಂಬ ಸಮಾಚಾರ ಯಕೋಬನಿಗೆ ಮುಟ್ಟಿತು. ಅವನು ತನ್ನ ಮಕ್ಕಳಿಗೆ, “ನೀವು ಮುಖಮುಖ ನೋಡಿಕೊಂಡು ಸುಮ್ಮನಿರುವುದು ಸರಿಯಲ್ಲ.</verse>
				<verse number="2">ಈಜಿಪ್ಟಿನಲ್ಲಿ ದವಸಧಾನ್ಯ ಉಂಟೆಂದು ನಾನು ಕೇಳಿದ್ದೇನೆ, ನಾವು ಸಾಯದೆ ಬದುಕುವಂತೆ ನೀವು ಅಲ್ಲಿಗೆ ಹೋಗಿ, ಬೇಕಾದ ದವಸವನ್ನು ಕೊಂಡುಕೊಂಡು ಬನ್ನಿ,” ಎಂದು ಹೇಳಿದನು.</verse>
				<verse number="3">ಜೋಸೆಫನ ಹತ್ತುಮಂದಿ ಅಣ್ಣಂದಿರು ಧಾನ್ಯವನ್ನು ತರುವುದಕ್ಕಾಗಿ ಈಜಿಪ್ಟ್ ದೇಶಕ್ಕೆ ಹೊರಟರು.</verse>
				<verse number="4">ಆದರೆ ಜೋಸೆಫನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ಯಕೋಬನು ಅವರ ಸಂಗಡ ಕಳಿಸಲಿಲ್ಲ. ಏಕೆಂದರೆ, ಅವನಿಗೆ ಏನಾದರೂ ಆಪತ್ತು ಒದಗೀತೆಂಬ ಹೆದರಿಕೆ ಅವನದು.</verse>
				<verse number="5">ಕಾನಾನ್ ನಾಡಿನಲ್ಲೂ ಬರವಿತ್ತು. ಧಾನ್ಯ ಕೊಂಡುಕೊಳ್ಳಲು ಅಲ್ಲಿಂದ ಈಜಿಪ್ಟಿಗೆ ಬಂದವರಲ್ಲಿ ಯಕೋಬನ (ಇಸ್ರಯೇಲನ) ಮಕ್ಕಳೂ ಇದ್ದರು.</verse>
				<verse number="6">ಆಗ ಈಜಿಪ್ಟ್ ದೇಶದಲ್ಲಿ ಅಧಿಕಾರ ನಡೆಸುತ್ತಿದ್ದವನು ಹಾಗೂ ಜನರಿಗೆ ದವಸಧಾನ್ಯ ಮಾರಾಟ ಮಾಡಿಸುತ್ತಿದ್ದವನು ಜೋಸೆಫನೇ. ಇಂತಿರಲು ಅವನ ಅಣ್ಣಂದಿರು ಬಂದು ಅವನ ಮುಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು.</verse>
				<verse number="7">ಜೋಸೆಫನು ಅವರನ್ನು ನೋಡಿದಕೂಡಲೆ ಗುರುತುಹಿಡಿದನು. ಆದರೂ ಅವರ ಪರಿಚಯ ಇಲ್ಲದವನಂತೆ ಬಿರುಬುಡಿಯಿಂದ, “ನೀವು ಎಲ್ಲಿಯವರು?” ಎಂದು ಕೇಳಿದನು. ಅವರು, “ನಾವು ಧಾನ್ಯ ಕೊಂಡುಕೊಳ್ಳುವುದಕ್ಕಾಗಿ ಕಾನಾನ್ ನಾಡಿನಿಂದ ಬಂದವರು,” ಎಂದು ಹೇಳಿದರು.</verse>
				<verse number="8">ಅಣ್ಣಂದಿರ ಗುರುತು ಜೋಸೆಫನಿಗೆ ತಿಳಿಯಿತಾದರೂ ಅವನ ಗುರುತು ಅವರಿಗೆ ತಿಳಿಯದೆ ಹೋಯಿತು.</verse>
				<verse number="9">ಅವರ ವಿಷಯವಾಗಿ ತಾನು ಕಂಡಿದ್ದ ಕನಸುಗಳನ್ನು ಜೋಸೆಫನು ನೆನಪಿಗೆ ತಂದುಕೊಂಡನು. ಅವರನ್ನು ನೋಡಿ, “ನೀವು ಗೂಢಚಾರರು; ನಮ್ಮ ದೇಶದ ದುರ್ಬಲ ಸ್ಥಳಗಳನ್ನು ಪತ್ತೆಹಚ್ಚುವುದಕ್ಕಾಗಿ ಬಂದವರು,” ಎಂದನು.</verse>
				<verse number="10">ಅದಕ್ಕೆ ಅವರು, \ಇಲ್ಲ, ಒಡೆಯಾ, ತಮ್ಮ ಸೇವಕರಾದ ನಾವು ಆಹಾರಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕೆ ಬಂದಿದ್ದೇವೆ.</verse>
				<verse number="11">ನಾವೆಲ್ಲರು ಒಬ್ಬ ತಂದೆಯ ಮಕ್ಕಳು; ನಾವು ಸತ್ಯವಂತರೇ ಹೊರತು ಗೂಢಚಾರರಲ್ಲ,” ಎಂದರು.</verse>
				<verse number="12">ಜೋಸೆಫನು ಅವರಿಗೆ, “ಸುಳ್ಳು, ನಮ್ಮ ದೇಶದ ದುರ್ಬಲ ಸ್ಥಳಗಳನ್ನು ತಿಳಿದುಕೊಳ್ಳುವುದಕ್ಕೆ ಬಂದಿದ್ದೀರಿ,” ಎಂದನು.</verse>
				<verse number="13">ಅದಕ್ಕೆ ಅವರು, “ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು; ಕಾನಾನ್ ನಾಡಿನವರು, ಒಬ್ಬ ತಂದೆಯ ಮಕ್ಕಳು; ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲೇ ಇದ್ದಾನೆ; ಒಬ್ಬನು ಇಲ್ಲವಾದನು,” ಎಂದರು.</verse>
				<verse number="14">ಜೋಸೆಫನು ಅವರಿಗೆ, “ನಾನು ಈಗಾಗಲೆ ಹೇಳಿದಂತೆ ನೀವು ಗೂಢಚಾರರೇ,</verse>
				<verse number="15">ಇದು ನಿಜವೋ ಸುಳ್ಳೋ ಎಂದು ಗೊತ್ತಾಗಬೇಕಾದರೆ ನೀವು ನಿಮ್ಮ ತಮ್ಮನನ್ನು ಬರಮಾಡಬೇಕು. ಅವನು ಬಂದ ಹೊರತು, ಫರೋಹನ ಜೀವದಾಣೆ, ನೀವು ಇಲ್ಲಿಂದ ಹೊರಟುಹೋಗಕೂಡದು.</verse>
				<verse number="16">ಅವನನ್ನು ಕರೆದುಕೊಂಡು ಬರುವುದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳಿಸಿರಿ. ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇರಿಸುತ್ತೇನೆ. ಹೀಗೆ ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಇಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ, ಫರೋಹನ ಜೀವದಾಣೆ, ನೀವು ಗೂಢಚಾರರೇ,” ಎಂದು ಹೇಳಿ,</verse>
				<verse number="17">ಅವರೆಲ್ಲರನ್ನು ಮೂರು ದಿನಗಳವರೆಗೆ ಕಾವಲಲ್ಲಿ ಇರಿಸಿದನು.</verse>
				<verse number="18">ಮೂರನೆಯ ದಿನ ಜೋಸೆಫನು ಅವರನ್ನು ಕರೆಸಿ, “ನಾನು ದೇವರಲ್ಲಿ ಭಯಭಕ್ತಿಯುಳ್ಳವನು; ನಿಮಗೆ ಜೀವದ ಮೇಲೆ ಆಶೆ ಇದ್ದರೆ ನಾನು ಹೇಳಿದಂತೆ ಮಾಡಿ;</verse>
				<verse number="19">ನೀವು ಸತ್ಯವಂತರಾದರೆ ನಿಮ್ಮಲ್ಲಿ ಒಬ್ಬನನ್ನು ಮಾತ್ರ ಸೆರೆಯಲ್ಲಿಡುತ್ತೇನೆ. ಮಿಕ್ಕವರು ಕ್ಷಾಮದಿಂದ ಬಳಲುತ್ತಿರುವ ನಿಮ್ಮ ನಿಮ್ಮ ಕುಟುಂಬಗಳಿಗೆ ಅಗತ್ಯವಾದ ಧಾನ್ಯವನ್ನು ತೆಗೆದುಕೊಂಡು ಹೋಗಿ.</verse>
				<verse number="20">ಆದರೆ ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು, ಕರೆದುಕೊಂಡು ಬಂದರೆ, ನಿಮ್ಮ ಮಾತು ಸತ್ಯವೆಂದು ತಿಳಿದುಕೊಳ್ಳುತ್ತೇನೆ, ಆಗ ನೀವು ಸಾಯದೆ ಉಳಿಯುವಿರಿ,” ಎಂದನು. ಅವರು ಹಾಗೆಯೇ ಮಾಡಲು ಒಪ್ಪಿಕೊಂಡರು.</verse>
				<verse number="21">ಆಗ ಅವರು ತಮ್ಮತಮ್ಮೊಳಗೆ, “ನಾವು ನಮ್ಮ ತಮ್ಮನಿಗೆ ಮಾಡಿದ ದ್ರೋಹಕ್ಕೆ ತಕ್ಕ ದಂಡನೆಯನ್ನು ಅನುಭವಿಸುತ್ತಿದ್ದೇವೆ. ಅವನು ನಮ್ಮನ್ನು ಕಳಕಳಿ ಬೇಡಿಕೊಂಡ. ಅವನ ಪ್ರಾಣಸಂಕಟವನ್ನು ತಿಳಿದೂ ನಾವು ಅವನ ಮೊರೆಗೆ ಕಿವಿಗೊಡಲಿಲ್ಲ. ಆದ್ದರಿಂದಲೆ ಈ ಸಂಕಟದಲ್ಲಿ ಸಿಕ್ಕಿಹಾಕಿಕೊಂಡು ಇದ್ದೇವೆ,” ಎಂದು ಮಾತಾಡಿಕೊಂಡರು.</verse>
				<verse number="22">ಅಂತೆಯೇ ರೂಬೇನನು, “ಆ ಹುಡುಗನಿಗೆ ಯಾವ ಕೇಡೂ ಮಾಡಬೇಡಿ’ ಎಂದು ನಾನು ಹೇಳಲಿಲ್ಲವೆ? ನೀವು ಕೇಳದೆಹೋದಿರಿ. ಅವನ ರಕ್ತ ಈಗ ನಮ್ಮಿಂದ ಪ್ರಾಯಶ್ಚಿತ್ತ ಕೇಳುತ್ತಿದೆ,” ಎಂದ.</verse>
				<verse number="23">ಜೋಸೆಫನು ಒಬ್ಬ ಅನುವಾದಕನ ಮುಖಾಂತರ ಅವರ ಸಂಗಡ ಮಾತಾಡುತ್ತಿದ್ದುದರಿಂದ ಅವನಿಗೆ ತಮ್ಮ ಮಾತು ಗೊತ್ತಾಗುತ್ತಿದೆ ಎಂದು ಅವರು ನೆನೆಸಲಿಲ್ಲ.</verse>
				<verse number="24">ಜೋಸೆಫನಾದರೋ ಅವರ ಬಳಿಯಿಂದ ಮರೆಯಾಗಿ ಹೋಗಿ ಕಣ್ಣೀರು ಸುರಿಸಿದ. ತರುವಾಯ ಅವರ ಬಳಿಗೆ ಬಂದು, ಸಂಭಾಷಣೆ ಮುಂದುವರೆಸಿ, ಸಿಮೆಯೋನನನ್ನು ಆರಿಸಿ, ಅವರ ಕಣ್ಣೆದುರಿನಲ್ಲೇ ಅವನಿಗೆ ಬೇಡಿಹಾಕಿಸಿದ.</verse>
				<verse number="25">ಇದಾದ ಬಳಿಕ ಜೋಸೆಫನು ತನ್ನ ಆಳುಗಳಿಗೆ, “ಆ ಜನರ ಚೀಲಗಳಲ್ಲಿ ಧಾನ್ಯವನ್ನು ತುಂಬಿಸಿ ಒಬ್ಬೊಬ್ಬನ ಚೀಲದಲ್ಲಿ ಅವನವನ ಹಣವನ್ನು ಅದರಲ್ಲಿ ಇಟ್ಟುಬಿಡಿ. ಅವರ ಪ್ರಯಾಣಕ್ಕೆ ಬೇಕಾದ ಅಹಾರವನ್ನು ಕೊಟ್ಟು ಕಳಿಸಿರಿ,” ಎಂದು ಅಪ್ಪಣೆ ಮಾಡಿದ. ಆಳುಗಳು ಅದರಂತೆಯೆ ಮಾಡಿದರು.</verse>
				<verse number="26">ಅಣ್ಣಂದಿರು ತಾವು ಕೊಂಡುಕೊಂಡ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಹೊರಟರು.</verse>
				<verse number="27">ರಾತ್ರಿಗೆ ಒಂದು ಚಾವಡಿಯಲ್ಲಿ ಇಳಿದುಕೊಂಡರು. ಅವರಲ್ಲಿ ಒಬ್ಬನು ತನ್ನ ಕತ್ತೆಗೆ ಧಾನ್ಯಕೊಡಬೇಕೆಂದು ತನ್ನ ಚೀಲವನ್ನು ಬಿಚ್ಚಿದನು. ತಾನು ತಂದಿದ್ದ ಹಣ ಅದರ ಬಾಯಲ್ಲೇ ಇತ್ತು.</verse>
				<verse number="28">“ನಾನು ಕೊಟ್ಟ ಹಣ ನನಗೆ ವಾಪಸ್ಸಾಗಿದೆ; ಇಗೋ, ನನ್ನ ಚೀಲದಲ್ಲಿದೆ,” ಎಂದು ತನ್ನ ಅಣ್ಣತಮ್ಮಂದಿರಿಗೆ ಹೇಳಿದ. ಅವರು ಕಕ್ಕಾಬಿಕ್ಕಿಯಾಗಿ, ಒಬ್ಬರನ್ನೊಬ್ಬರು ಬೆರಗಿನಿಂದ ನೋಡುತ್ತಾ, “ನಮಗೇಕೆ ದೇವರು ಹೀಗೆ ಮಾಡಿದ್ದಾರೆ?” ಎಂದುಕೊಂಡರು.</verse>
				<verse number="29">ಕಾನಾನ್ ನಾಡನ್ನು ಅವರು ತಲುಪಿದರು. ತಮ್ಮ ತಂದೆಯ ಬಳಿಗೆ ಬಂದು ನಡೆದುದೆಲ್ಲವನ್ನು ವರದಿಮಾಡಿದರು.</verse>
				<verse number="30">“ಆ ದೇಶಾಧಿಪತಿ ನಮ್ಮೊಡನೆ ಗಡುಸಾಗಿ ಮಾತಾಡಿದ; ನಮ್ಮನ್ನು ಗೂಢಚಾರರೆಂದು ಕರೆದ.</verse>
				<verse number="31">ನಾವು ಅವನಿಗೆ, ‘ನಾವು ಸತ್ಯವಂತರೇ ಹೊರತು ಗೂಢಚಾರರೇನು ಅಲ್ಲ,</verse>
				<verse number="32">ನಾವು ಒಬ್ಬ ತಂದೆಗೆ ಹುಟ್ಟಿದ ಹನ್ನೆರಡು ಮಂದಿ ಅಣ್ಣತಮ್ಮಂದಿರು; ನಮ್ಮಲ್ಲಿ ಒಬ್ಬನು ಇಲ್ಲವಾದ. ಚಿಕ್ಕವನೋ ಈಗ ಕಾನಾನ್ ನಾಡಿನಲ್ಲಿ ನಮ್ಮ ತಂದೆಯ ಬಳಿಯಲ್ಲಿದ್ದಾನೆ’ ಎಂದು ಹೇಳಿದೆವು.</verse>
				<verse number="33">ಅದಕ್ಕೆ ಆ ದೇಶಾಧಿಪತಿ, “ನೀವು ಸತ್ಯವಂತರೋ ಇಲ್ಲವೋ ಎಂಬುದು ಗೊತ್ತಾಗುವುದಕ್ಕಾಗಿ ನಿಮ್ಮಲ್ಲಿ ಒಬ್ಬನನ್ನು ನನ್ನ ಬಳಿಯಲ್ಲೆ ಬಿಟ್ಟುಹೋಗಿ; ನಿಮ್ಮ ಕುಟುಂಬದವರ ಕ್ಷಾಮನಿವಾರಣೆಗೆ ಬೇಕಾದುದನ್ನು ತೆಗೆದುಕೊಂಡು ಹೋಗಬಹುದು.</verse>
				<verse number="34">ಆದರೆ ನಿಮ್ಮ ತಮ್ಮನನ್ನು ನನ್ನ ಬಳಿಗೆ ಕರೆದುಕೊಂಡು ಬರಬೇಕು. ಕರೆದುಕೊಂಡು ಬಂದರೆ, ನೀವು ಗೂಢಚಾರರಲ್ಲ. ಸತ್ಯವಂತರೇ ಎಂದು ತಿಳಿದುಕೊಳ್ಳುತ್ತೇನೆ; ನಿಮ್ಮ ಅಣ್ಣನನ್ನು ಬಿಡುಗಡೆ ಮಾಡುತ್ತೇನೆ ಮತ್ತು ನೀವು ಈ ದೇಶದಲ್ಲಿ ವ್ಯಾಪಾರ ನಡೆಸಬಹುದು,” ಎಂದು ಹೇಳಿದ.</verse>
				<verse number="35">ಅವರು ತಮ್ಮ ತಮ್ಮ ಚೀಲವನ್ನು ಬಿಚ್ಚಿನೋಡಿದಾಗ ಪ್ರತಿಯೊಬ್ಬನ ಚೀಲದಲ್ಲೂ ಅವನವನ ಹಣದ ಗಂಟು ಸಿಕ್ಕಿತು. ಆ ಗಂಟುಗಳನ್ನು ಕಂಡಾಗ ಅವರೂ ಅವರ ತಂದೆಯೂ ಚಕಿತರಾದರು.</verse>
				<verse number="36">ಆಗ ಅವರ ತಂದೆ ಯಕೋಬನು ಅವರಿಗೆ, “ನನ್ನನ್ನು ಮಕ್ಕಳಿಲ್ಲದವನಂತೆ ಮಾಡಿದ್ದೀರಿ; ಜೋಸೆಫನು ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾಮೀನನನ್ನೂ ಕರೆದುಕೊಂಡು ಹೋಗಬೇಕೆಂದಿದ್ದೀರಿ. ಈ ಕಷ್ಟದುಃಖವೆಲ್ಲ ನನ್ನ ತಲೆಯ ಮೇಲೆ ಬಂದೆರಗಿದೆ!” ಎಂದನು.</verse>
				<verse number="37">ಅದಕ್ಕೆ ರೂಬೇನನು, “ನಾನು ಈ ಹುಡುಗನನ್ನು ನಿಮಗೆ ಪುನಃ ತಂದೊಪ್ಪಿಸುತ್ತೇನೆ; ಇಲ್ಲದೆಹೋದರೆ ನನ್ನಿಬ್ಬರು ಗಂಡುಮಕ್ಕಳನ್ನು ಕೊಂದುಹಾಕಬಹುದು. ಇವನನ್ನು ನನ್ನ ವಶಕ್ಕೆ ಕೊಡಿ, ನಾನು ತಪ್ಪದೆ ಇವನನ್ನು ನಿಮ್ಮ ಬಳಿಗೆ ಕರೆದುಕೊಂಡು ಬರುತ್ತೇನೆ,” ಎಂದು ಹೇಳಿದ.</verse>
				<verse number="38">ಯಕೋಬನು ಅವರಿಗೆ, “ನನ್ನ ಮಗ ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದ ಅವನು ಸತ್ತುಹೋದ, ಇವನೊಬ್ಬನೇ ಉಳಿದು ಇದ್ದಾನೆ, ದಾರಿಯಲ್ಲಿ ಇವನಿಗೇನಾದರೂ ಆಪತ್ತು ಸಂಭವಿಸಬಹುದು. ಆಗ, ನರೆಕೂದಲಿನ ಈ ಮುದುಕ ದುಃಖದಿಂದಲೆ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ,” ಎಂದು ಹೇಳಿದ.</verse>
			</chapter>
			<chapter number="43">
				<verse number="1">ಬರವು ಕಾನಾನಿನಲ್ಲಿ ಘೋರವಾಗಿತ್ತು.</verse>
				<verse number="2">ಈಜಿಪ್ಟಿನಿಂದ ತಂದ ದವಸಧಾನ್ಯ ಮುಗಿದು ಹೋಗಿತ್ತು. ಯಕೋಬನು ತನ್ನ ಪುತ್ರರಿಗೆ, ” ನೀವು ಪುನಃ ಹೋಗಿ ಸ್ವಲ್ಪ ಧಾನ್ಯವನ್ನು ಕೊಂಡುಕೊಂಡು ಬನ್ನಿ,” ಎಂದನು.</verse>
				<verse number="3">ಅದಕ್ಕೆ ಯೆಹೂದನು ಹೀಗೆಂದನು: “ಆ ಮನುಷ್ಯ ನಮಗೆ, ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ದರ್ಶನಕ್ಕೆ ಬರಕೂಡದು’ ಎಂದು ಕಡುಖಂಡಿತವಾಗಿ ಹೇಳಿಬಿಟ್ಟಿದ್ದಾನೆ.</verse>
				<verse number="4">ನೀವು ನಮ್ಮ ತಮ್ಮನನ್ನು ಜೊತೆಯಲ್ಲಿ ಕಳಿಸಿದರೆ, ಹೋಗಿ ಧಾನ್ಯವನ್ನು ಕೊಂಡುಕೊಂಡು ಬರುತ್ತೇವೆ.</verse>
				<verse number="5">ಕಳಿಸಿಕೊಡದಿದ್ದರೆ, ನಾವು ಹೋಗುವುದಿಲ್ಲ. ಆ ಮನುಷ್ಯ, ‘ನಿಮ್ಮ ತಮ್ಮ ನಿಮ್ಮ ಸಂಗಡ ಇಲ್ಲದಿದ್ದರೆ ಸಮ್ಮುಖಕ್ಕೆ ಬರಲೇ ಕೂಡದು’ ಎಂದಿದ್ದಾನೆ\.</verse>
				<verse number="6">ಅದಕ್ಕೆ ಯಕೋಬನು, “ನಿಮಗೆ ಇನ್ನೊಬ್ಬ ತಮ್ಮನಿದ್ದಾನೆಂದು ಆ ಮನುಷ್ಯನಿಗೆ ಹೇಳಿ ನನ್ನನ್ನೇಕೆ ಈ ಸಂಕಟಕ್ಕೆ ಗುರಿಮಾಡಿದಿರಿ?” ಎಂದನು.</verse>
				<verse number="7">ಆಗ ಅವರು, ”ಆ ಮನುಷ್ಯ ನಿಮ್ಮ ವಿಷಯದಲ್ಲೂ ನಮ್ಮ ಮನೆಯವರ ವಿಷಯದಲ್ಲೂ ಸೂಕ್ಷ್ಮವಾಗಿ ವಿಚಾರಿಸಿದ; ನಿಮ್ಮ ತಂದೆ ಇನ್ನು ಜೀವದಿಂದ ಇದ್ದಾನೋ? ನಿಮಗೆ ತಮ್ಮನಿದ್ದಾನೋ? ಎಂದೆಲ್ಲ ಅವನೇ ಕೇಳಿದ. ಆ ಪ್ರಶ್ನೆಗಳಿಗೆ ನಾವು ತಕ್ಕ ಉತ್ತರ ಕೊಡಬೇಕಾಯಿತು. ಅಲ್ಲದೆ, ಅವನು ‘ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿ', ಎಂದು ಕೇಳುತ್ತಾನೆಂದು ತಿಳಿಯಲು ನಮಗೆ ಹೇಗೆ ಸಾಧ್ಯವಿತ್ತು?” ಎಂದರು.</verse>
				<verse number="8">ಆಗ ಯೆಹೂದನು ತನ್ನ ತಂದೆ ಯಕೋಬನಿಗೆ, “ನೀವು, ನಾವು ಮತ್ತು ನಮ್ಮ ಮಕ್ಕಳು, ಎಲ್ಲರೂ ಸಾಯದೆ ಉಳಿಯಬೇಕಾದರೆ ಆ ಹುಡುಗನನ್ನು ನನ್ನ ಜೊತೆ ಕಳಿಸಿಕೊಡಿ, ನಾವು ಇದೀಗಲೆ ಹೊರಡುತ್ತೇವೆ.</verse>
				<verse number="9">ಅವನಿಗೆ ನಾನೇ ಹೊಣೆ; ಅವನ ವಿಷಯ ನನಗೆ ಬಿಡಿ. ನಾನು ಅವನನ್ನು ಮತ್ತೆ ಕರೆದುಕೊಂಡು ಬಂದು ನಿಮ್ಮ ಎದುರಿನಲ್ಲಿ ನಿಲ್ಲಿಸದೆಹೋದರೆ ಆ ದೋಷ ಸದಾಕಾಲ ನನ್ನ ಮೇಲೆ ಇರಲಿ.</verse>
				<verse number="10">ನಾವು ತಡಮಾಡದೆ ಇದ್ದಿದ್ದರೆ, ಇಷ್ಟರೊಳಗೆ ಎರಡು ಸಾರಿ ಹೋಗಿ ಬರುತ್ತಿದ್ದೆವು,” ಎಂದು ಹೇಳಿದನು.</verse>
				<verse number="11">ಇಷ್ಟಾದ ಮೇಲೆ ಅವರ ತಂದೆ ಯಕೋಬನು, “ನೀವು ಹೋಗಲೇಬೇಕಾದರೆ, ಒಂದು ಕೆಲಸಮಾಡಿ; ಈ ನಾಡಿನಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಹಾಕಿಕೊಂಡು ಹೋಗಿ, ಆ ಮನುಷ್ಯನಿಗೆ ಕಾಣಿಕೆಯಾಗಿ ಕೊಡಿ.</verse>
				<verse number="12">ಅದೂ ಅಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿ; ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳಿಸಿದ ಹಣವನ್ನು ತೆಗೆದುಕೊಂಡು ಹೋಗಿ; ಬಹುಶಃ ಅವರಿಗೆ ತಿಳಿಯದೆ ಅದು ನಿಮ್ಮ ಕೈಗೆ ಬಂದಿರಬಹುದು.</verse>
				<verse number="13">ನಿಮ್ಮ ತಮ್ಮನನ್ನೂ ಕರೆದುಕೊಂಡು ಮರಳಿ ಆ ಮನುಷ್ಯನ ಬಳಿಗೆ ಹೋಗಿ.</verse>
				<verse number="14">ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಬಿಡುವಂತೆ ಸರ್ವವಲ್ಲಭರಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಬೇಕಾದರೆ ಹಾಗೆಯೇ ಆಗಲಿ!” ಎಂದನು.</verse>
				<verse number="15">ಅವರು ಆ ಕಾಣಿಕೆ ವಸ್ತುಗಳನ್ನು ಸಿದ್ಧಮಾಡಿಕೊಂಡು, ಎರಡರಷ್ಟು ಹಣವನ್ನು ತೆಗೆದುಕೊಂಡು ಹಾಗೂ ಬೆನ್ಯಾಮೀನನನ್ನು ಜೊತೆಯಲ್ಲಿ ಕರೆದುಕೊಂಡು ಹೊರಟರು. ಈಜಿಪ್ಟನ್ನು ಸೇರಿ, ಜೋಸೆಫನ ಸಮ್ಮುಖದಲ್ಲಿ ನಿಂತುಕೊಂಡರು.</verse>
				<verse number="16">ಬೆನ್ಯಾಮೀನನು ಅವರ ಸಂಗಡ ಇರುವುದನ್ನು ಜೋಸೆಫನು ನೋಡಿದನು. ಕೂಡಲೆ ಗೃಹನಿರ್ವಾಹಕನನ್ನು ಕರೆದು, “ಈ ಜನರು ನನ್ನ ಸಂಗಡ ಈ ಮಧ್ಯಾಹ್ನ ಊಟಮಾಡಬೇಕಾಗಿ ಇದೆ; ಇವರನ್ನು ಮನೆಯೊಳಗೆ ಕರೆದುಕೊಂಡು ಹೋಗು. ಮಾಂಸದ ಅಡುಗೆ ಮಾಡಿ, ಎಲ್ಲವನ್ನು ಸಿದ್ಧಪಡಿಸು,” ಎಂದು ಅಪ್ಪಣೆಮಾಡಿದನು.</verse>
				<verse number="17">ಅದೇ ಮೇರೆಗೆ ಗೃಹನಿರ್ವಾಹಕನು ಅವರನ್ನು ಜೋಸೆಫನ ಮನೆಗೆ ಕರೆದುಕೊಂಡು ಹೋದನು.</verse>
				<verse number="18">ಅಲ್ಲಿಗೆ ಹೋಗುತ್ತಿದ್ದ ಅವರಿಗೆ ಭಯವಾಯಿತು. “ಹಿಂದೆ ನಾವು ಚೀಲಗಳಲ್ಲಿ ವಾಪಸ್ಸು ತೆಗೆದುಕೊಂಡು ಹೋದ ಹಣದ ಪ್ರಯುಕ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ; ದಿಢೀರನೆ ನಮ್ಮ ಮೇಲೆ ಬಿದ್ದು ನಮ್ಮನ್ನು ಗುಲಾಮರನ್ನಾಗಿಸಿಕೊಳ್ಳಬಹುದು. ನಮ್ಮ ಕತ್ತೆಗಳನ್ನು ಹಿಡಿದುಕೊಳ್ಳಬಹುದು,” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಂಡರು.</verse>
				<verse number="19">ಮನೆಯ ಬಾಗಿಲ ಬಳಿ ಗೃಹನಿರ್ವಾಹಕನಿಗೆ,</verse>
				<verse number="20">“ಅಯ್ಯಾ, ಮೊದಲೊಂದು ಸಾರಿ ಆಹಾರಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕೆ ಬಂದಿದ್ದೆವು.</verse>
				<verse number="21">ನಾವು ಹೊರಟುಹೋದ ನಂತರ ಚಾವಡಿಯೊಂದರಲ್ಲಿ ಇಳಿದುಕೊಂಡೆವು. ಅಲ್ಲಿ ನಮ್ಮ ಚೀಲಗಳನ್ನು ಬಿಚ್ಚಿನೋಡಿದಾಗ ಪ್ರತಿ ಒಬ್ಬನ ಹಣ, ತೂಕ ಕಿಂಚಿತ್ತೂ ಕಡಿಮೆಯಿಲ್ಲದೆ, ಅವನವನ ಚೀಲದಲ್ಲೇ ಇತ್ತು. ಅದನ್ನು ವಾಪಸ್ಸು ತಂದಿದ್ದೇವೆ.</verse>
				<verse number="22">ದವಸವನ್ನು ಕೊಂಡುಕೊಳ್ಳುವುದಕ್ಕೆ ಬೇರೆ ಹಣ ತಂದಿದ್ದೇವೆ. ಆ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೋ ತಿಳಿಯದು,” ಎಂದು ಹೇಳಿದರು.</verse>
				<verse number="23">ಅದಕ್ಕೆ ಆ ಗೃಹನಿರ್ವಾಹಕ, “ಸಮಾಧಾನದಿಂದಿರಿ, ಹೆದರಬೇಡಿ. ನಿಮ್ಮ ತಂದೆಗೂ ನಿಮಗೂ ದೇವರಾದವರು ನಿಮ್ಮ ಚೀಲಗಳಲ್ಲಿಯೇ ನಿಧಿ ನಿಕ್ಷೇಪ ದೊರಕುವಂತೆ ಅನುಗ್ರಹಿಸಿದ್ದಾರೆ; ನೀವು ಕೊಟ್ಟ ಹಣ ನನಗೆ ಮುಟ್ಟಿದೆ,” ಎಂದು ಹೇಳಿ ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು.</verse>
				<verse number="24">ಆಮೇಲೆ ಗೃಹನಿರ್ವಾಹಕನು ಅವರೆಲ್ಲರನ್ನು ಜೋಸೆಫನ ಮನೆಯೊಳಗೆ ಕರೆತಂದು ಕಾಲು ತೊಳೆದುಕೊಳ್ಳುವುದಕ್ಕೆ ನೀರನ್ನು ಕೊಡಿಸಿದನು. ಅವರ ಕತ್ತೆಗಳಿಗೆ ಮೇವು ಹಾಕಿಸಿದನು.</verse>
				<verse number="25">ತಾವು ಅಲ್ಲೇ ಊಟಮಾಡಬೇಕೆಂಬ ಸಂಗತಿ ಅವರಿಗೆ ತಿಳಿಯಿತು. ಆದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಸಿದ್ಧವಾಗಿ ಇಟ್ಟುಕೊಂಡರು. ಜೋಸೆಫನು ಬರುವ ತನಕ, ಮಧ್ಯಾಹ್ನದವರೆಗೆ ಕಾದುಕೊಂಡಿದ್ದರು.</verse>
				<verse number="26">ಜೋಸೆಫನು ಮನೆಗೆ ಬಂದಾಗ ಅವರು ಅವನಿಗೆ ಕಾಣಿಕೆಯನ್ನು ತಂದುಕೊಟ್ಟು, ಅವನ ಮುಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು.</verse>
				<verse number="27">ಅವನು ಅವರ ಯೋಗಕ್ಷೇಮವನ್ನು ವಿಚಾರಿಸಿದನು. ಬಳಿಕ, “ನೀವು ಹೇಳಿದ ಮುಪ್ಪುವಯಸ್ಸಿನ ನಿಮ್ಮ ತಂದೆ ಕ್ಷೇಮವೋ? ಇನ್ನು ಬದುಕಿದ್ದಾನೋ?\ ಎಂದು ಕೇಳಲು</verse>
				<verse number="28">ಅವರು ಮತ್ತೆ ನೆಲದವರೆಗೆ ಬಾಗಿ ನಮಸ್ಕಾರ ಮಾಡಿ, “ನಿಮ್ಮ ಸೇವಕರಾದ ನಮ್ಮ ತಂದೆ ಇಂದಿಗೂ ಕ್ಷೇಮದಿಂದ ಇದ್ದಾರೆ,” ಎಂದರು.</verse>
				<verse number="29">ಅನಂತರ ಕಣ್ಣೆತ್ತಿ, ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿದನು. “ನೀವು ಹೇಳಿದ ನಿಮ್ಮ ಕಿರಿಯ ತಮ್ಮ ಇವನೇನೋ?” ಎಂದು ಕೇಳಿ ಅವನಿಗೆ, “ಮಗು, ದೇವರ ಪ್ರೀತಿ ನಿನ್ನ ಮೇಲಿರಲಿ!” ಎಂದು ಹೇಳಿದನು.</verse>
				<verse number="30">ಜೋಸೆಫನಿಗೆ ತಮ್ಮನನ್ನು ನೋಡಿದ ಮೇಲೆ ಕರುಳು ಕರಗಿತು. ಕಣ್ಣೀರನ್ನು ತಡೆಯಲಾಗದೆ ಒಳ ಅರಮನೆಗೆ ತ್ವರೆಯಾಗಿ ಹೋಗಿ ಅಲ್ಲಿ ಅತ್ತನು.</verse>
				<verse number="31">ಆಮೇಲೆ ಮುಖವನ್ನು ತೊಳೆದುಕೊಂಡು, ಹೊರಗೆ ಬಂದು, ಮನಸ್ಸನ್ನು ಬಿಗಿಹಿಡಿದು, “ಊಟಕ್ಕೆ ಬಡಿಸಿರಿ”, ಎಂದು ಅಪ್ಪಣೆ ಕೊಟ್ಟನು.</verse>
				<verse number="32">ಪರಿಚಾರಕರು ಅವನಿಗೆ ಬೇರೆ, ಅವನ ಅಣ್ಣತಮ್ಮಂದಿರಿಗೇ ಬೇರೆ, ಅವನ ಸಂಗಡವಿದ್ದ ಈಜಿಪ್ಟಿನವರಿಗೇ ಬೇರೆ, ಹೀಗೆ ಬೇರೆಬೇರೆಯಾಗಿ ಊಟಕ್ಕೆ ಬಡಿಸಿದರು. ಈಜಿಪ್ಟಿನವರು ಹಿಬ್ರಿಯರ ಸಹಪಂಕ್ತಿಯಲ್ಲಿ ಊಟಮಾಡುವುದಿಲ್ಲ; ಅದು ಅವರಿಗೆ ಅಸಹ್ಯ.</verse>
				<verse number="33">ಜೋಸೆಫನು ತನ್ನ ಅಣ್ಣತಮ್ಮಂದಿರನ್ನು, ಹಿರಿಯವನು ಮೊದಲ್ಗೊಂಡು ಕಿರಿಯವನವರೆಗೂ, ಅವರವರ ಮಯಸ್ಸಿನ ಪ್ರಕಾರ ಕುಳ್ಳಿರಿಸಿದ್ದನು. ಇದನ್ನು ಗಮನಿಸಿದ ಅವರು ಒಬ್ಬರನ್ನೊಬ್ಬರು ನೋಡುತ್ತಾ ಆಶ್ಚರ್ಯಪಟ್ಟರು.</verse>
				<verse number="34">ಜೋಸೆಫನು ತನ್ನ ಮುಂದೆ ಬಡಿಸಿದ್ದ ಪದಾರ್ಥಗಳಲ್ಲಿ ಅವರಿಗೆ ಭಾಗಗಳನ್ನು ಕಳಿಸಿದನು. ಬೆನ್ಯಾಮೀನನಿಗೆ ಬಂದ ಭಾಗವಾದರೋ ಮಿಕ್ಕವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಯಥೇಚ್ಛವಾಗಿ ಪಾನಮಾಡಿ ಜೋಸೆಫನ ಸಂಗಡ ಸಂಭ್ರಮದಿಂದಿದ್ದರು.</verse>
			</chapter>
			<chapter number="44">
				<verse number="1">ತರುವಾಯ ಜೋಸೆಫನು ತನ್ನ ಗೃಹನಿರ್ವಾಹಕನನ್ನು ಕರೆದು, “ಆ ಜನರ ಗೋಣಿಚೀಲಗಳಲ್ಲಿ ಹೊರುವಷ್ಟು ಧಾನ್ಯವನ್ನು ತುಂಬಿಸಿ, ಒಬ್ಬೊಬ್ಬನ ಚೀಲದ ಬಾಯಿಯಲ್ಲಿ ಅವನವನ ಹಣದ ಗಂಟನ್ನಿಡು.</verse>
				<verse number="2">ಕಿರಿಯವನ ಚೀಲದ ಬಾಯೊಳಗೆ ಅವನು ದವಸಕ್ಕೆ ತಂದ ಹಣವನ್ನಲ್ಲದೆ ನನ್ನ ಬೆಳ್ಳಿಯ ಪಾನಪಾತ್ರೆಯನ್ನೂ ಇಡು,” ಎಂದು ಅಪ್ಪಣೆಕೊಟ್ಟನು. ಗೃಹನಿರ್ವಾಹಕನು ಅದರಂತೆಯೇ ಮಾಡಿದನು.</verse>
				<verse number="3">ಬೆಳಿಗ್ಗೆ, ಹೊತ್ತು ಮೂಡುವಾಗಲೆ, ಆ ಜನರು ಅಪ್ಪಣೆಪಡೆದು, ಕತ್ತೆಗಳನ್ನು ಹೊಡೆದುಕೊಂಡು ಹೊರಟು ಹೋದರು.</verse>
				<verse number="4">ಅವರು ಪಟ್ಟಣಗಳನ್ನು ಬಿಟ್ಟು ಸ್ವಲ್ಪದೂರ ಹೋಗುವಷ್ಟರಲ್ಲಿ, ಜೋಸೆಫನು ತನ್ನ ಗೃಹನಿರ್ವಾಹಕನಿಗೆ, ‘ನೀನೆದ್ದು ಆ ಜನರನ್ನು ಹಿಂದಟ್ಟಿ ಹೋಗಿ ಹಿಡಿ. ಅವರಿಗೆ, ‘ನೀವು ಉಪಕಾರಕ್ಕೆ ಪ್ರತಿಯಾಗಿ ಏಕೆ ಅಪಕಾರ ಮಾಡಿದಿರಿ?</verse>
				<verse number="5">ಆ ಪಾತ್ರೆಯಿಂದಲೆ ಅಲ್ಲವೆ ನನ್ನ ದಣಿ ಪಾನಮಾಡುವುದು? ಅದರಲ್ಲಿ ನೋಡೇ ಅಲ್ಲವೆ ಶಕುನ ಹೇಳುವುದು? ನೀವು ಮಾಡಿರುವುದು ಮಹಾ ನೀಚತನ, ಎನ್ನಬೇಕು,” ಎಂದು ತಿಳಿಸಿದನು.</verse>
				<verse number="6">ಗೃಹನಿರ್ವಾಹಕನು ಅವರನ್ನು ಹಿಂದಟ್ಟಿ ಹೋಗಿ ಹಿಡಿದು ಆ ಮಾತುಗಳನ್ನೇ ಹೇಳಿದನು.</verse>
				<verse number="7">ಅದಕ್ಕೆ ಅವರು, “ಅಯ್ಯಾ, ನೀವು ಇಂಥಾ ಮಾತುಗಳನ್ನು ಆಡಬಹುದೆ! ನಿಮ್ಮ ಸೇವಕರಾದ ನಾವು ಇಂಥ ಕೃತ್ಯವನ್ನು ಎಂದಿಗೂ ಮಾಡುವವರಲ್ಲ.</verse>
				<verse number="8">ಮೊದಲು ನಮ್ಮ ಚೀಲಗಳ ಬಾಯಲ್ಲಿ ಸಿಕ್ಕಿದ ಹಣವನ್ನು ನಾವು ಕಾನಾನ್ ನಾಡಿನಿಂದ ವಾಪಸ್ಸು ತಂದು ನಿಮಗೆ ಕೊಟ್ಟೆವಲ್ಲವೆ? ಹೀಗಿರುವಾಗ ನಾವು ನಿಮ್ಮ ದಣಿಯ ಮನೆಯೊಳಗಿಂದ ಬೆಳ್ಳಿಬಂಗಾರ ಕದಿಯುವುದುಂಟೆ?</verse>
				<verse number="9">ಆ ಪಾತ್ರೆ ನಿಮ್ಮ ಸೇವಕರಾದ ನಮ್ಮಲ್ಲಿ ಯಾರಾದರ ಬಳಿ ಸಿಕ್ಕಿದ್ದಾದರೆ ಅವನಿಗೆ ಮರಣದಂಡನೆ ಆಗಲಿ! ಅದುಮಾತ್ರವಲ್ಲ, ನಾವೆಲ್ಲರೂ ನಮ್ಮೊಡೆಯರಿಗೆ ಊಳಿಗದವರಾಗುತ್ತೇವೆ,” ಎಂದರು.</verse>
				<verse number="10">ಅದಕ್ಕೆ ಆ ಗೃಹನಿರ್ವಾಹಕ, “ಸರಿ, ನೀವು ಹೇಳಿದಂತೆಯೇ ಆಗಲಿ; ಆ ಪಾತ್ರೆ ಯಾವನ ಬಳಿ ಸಿಕ್ಕುತ್ತದೋ ಅವನು ನನಗೆ ಊಳಿಗದವನಾಗಬೇಕು; ಉಳಿದವರು ತಪ್ಪಿಲ್ಲದವರು,’ ಎಂದು ಹೇಳಿದ್ದೇ</verse>
				<verse number="11">ಅವರಲ್ಲಿ ಪ್ರತಿಯೊಬ್ಬನೂ ತನ್ನತನ್ನ ಚೀಲವನ್ನು ನೆಲಕ್ಕಿಳಿಸಿ ಬಿಚ್ಚಿದರು.</verse>
				<verse number="12">ಅವನು ಹಿರಿಯವನಿಂದ ಮೊದಲ್ಗೊಂಡು ಕಿರಿಯವನ ತನಕ ಪರೀಕ್ಷಿಸಿ ನೋಡಿದನು. ಆ ಪಾತ್ರೆ ಬೆನ್ಯಾಮೀನನ ಚೀಲದಲ್ಲಿ ಸಿಕ್ಕಿತು.</verse>
				<verse number="13">ಆಗ ಅವರು ತಮ್ಮ ಬಟ್ಟೆಗಳನ್ನು ಹರಿದುಕೊಂಡು ತಮ್ಮ ದುಃಖವನ್ನು ವ್ಯಕ್ತಪಡಿಸಿದರು; ಕತ್ತೆಗಳ ಮೇಲೆ ಚೀಲಗಳನ್ನು ಹೇರಿ ಪಟ್ಟಣಕ್ಕೆ ಹಿಂದಿರುಗಿ ಬಂದರು.</verse>
				<verse number="14">ಯೆಹೂದನು ಮತ್ತು ಅವನ ಅಣ್ಣತಮ್ಮಂದಿರು ಜೋಸೆಫನ ಮನೆಗೆ ಹಿಂದಿರುಗಿದಾಗ ಜೋಸೆಫನು ಇನ್ನೂ ಮನೆಯಲ್ಲೇ ಇದ್ದನು. ಅವರು ಅವನಿಗೆ ಅಡ್ಡಬಿದ್ದರು.</verse>
				<verse number="15">ಅವನು ಅವರನ್ನು, “ನೀವು ಮಾಡಿರುವ ಕೃತ್ಯ ಎಂಥದ್ದು! ನನ್ನಂಥವನು ಕಣಿ ನೋಡಿ ಗುಟ್ಟನ್ನು ರಟ್ಟು ಮಾಡಬಲ್ಲವನೆಂಬುದು ನಿಮಗೆ ತಿಳಿಯಲಿಲ್ಲವೋ?” ಎಂದು ಕೇಳಿದನು.</verse>
				<verse number="16">ಅದಕ್ಕೆ ಯೆಹೂದನು, “ನಮ್ಮೊಡೆಯರಿಗೆ ನಾವು ಏನು ಹೇಳೋಣ? ಯಾವ ಉತ್ತರ ಕೊಡೋಣ? ನಾವು ನಿರ್ದೋಷಿಗಳೆಂದು ತೋರಿಸಲು, ಏನುತಾನೆ ಮಾಡುವುದು? ನಿಮ್ಮ ಸೇವಕರಾದ ನಮ್ಮ ಪಾಪಕೃತ್ಯವನ್ನು ದೇವರೇ ಹೊರಪಡಿಸಿದ್ದಾರೆ. ಆ ಪಾತ್ರೆ ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರವಲ್ಲ, ನಾವೆಲ್ಲರೂ ನಮ್ಮೊಡೆಯರಿಗೆ ಗುಲಾಮರಾದೆವಲ್ಲವೆ?\ ಎಂದನು.</verse>
				<verse number="17">ಜೋಸೆಫನು, “ಹಾಗೆ ಎಂದಿಗೂ ಆಗಬಾರದು; ಆ ಪಾತ್ರೆ ಯಾರ ಬಳಿಯಲ್ಲಿ ಸಿಕ್ಕಿತೋ ಅವನು ಮಾತ್ರ ನನಗೆ ಗುಲಾಮನಾಗಬೇಕು; ನೀವಾದರೋ ಅಡ್ಡಿಯಿಲ್ಲದೆ ನಿಮ್ಮ ತಂದೆಯ ಬಳಿಗೆ ಹೋಗಬಹುದು,” ಎಂದನು.</verse>
				<verse number="18">ಆಗ ಯೆಹೂದನು ಹತ್ತಿರಕ್ಕೆ ಬಂದು, “ನನ್ನೊಡೆಯಾ, ತಮ್ಮ ಸೇವಕನಾದ ನಾನು ಒಂದು ಮಾತನ್ನು ಅರಿಕೆಮಾಡಿಕೊಳ್ಳುತ್ತೇನೆ; ನನ್ನ ಮೇಲೆ ಸಿಟ್ಟುಮಾಡಬೇಡಿ; ತಾವು ಫರೋಹನಿಗೆ ಸಮಾನರು.</verse>
				<verse number="19">ಒಡೆಯರಾದ ತಾವು ಸೇವಕರಾದ ನಮ್ಮನ್ನು, ‘ನಿಮಗೆ ತಂದೆಯಾಗಲಿ, ತಮ್ಮನಾಗಲಿ ಇದ್ದಾರೋ’ ಎಂದು ಕೇಳಿದಿರಿ.</verse>
				<verse number="20">ನಾವು ‘ತಂದೆ ಇದ್ದಾರೆ, ಅವರು ಮುದುಕ; ಮುಪ್ಪಿನಲ್ಲಿ ಅವರಿಗೆ ಹುಟ್ಟಿದ ಒಬ್ಬ ಚಿಕ್ಕ ಹುಡುಗ ಇದ್ದಾನೆ. ಅವನ ಒಡಹುಟ್ಟಿದವನು ಸತ್ತುಹೋದ. ಅವನ ತಾಯಿಯ ಹೊಟ್ಟೆಯಲ್ಲಿ ಹುಟ್ಟಿದವರಲ್ಲಿ ಅವನೊಬ್ಬನೇ ಉಳಿದಿದ್ದಾನೆ. ಅವನ ಮೇಲೆ ತಂದೆಗೆ ಅಪಾರ ಪ್ರೀತಿ,’ ಎಂದು ಹೇಳಿದೆವು.</verse>
				<verse number="21">ಅದಕ್ಕೆ ತಾವು ಸೇವಕರಾದ ನಮಗೆ, “ನಾನು ಆ ಹುಡುಗನನ್ನು ನೋಡಬೇಕು, ಅವನನ್ನು ನನ್ನ ಬಳಿಗೆ ಕರೆದು ತನ್ನಿ,’ ಎಂದು ಅಪ್ಪಣೆಕೊಟ್ಟಿರಿ.</verse>
				<verse number="22">ನಾವು, ‘ಆ ಹುಡುಗನು ತಂದೆಯನ್ನು ಬಿಟ್ಟು ಅಗಲುವುದಕ್ಕಾಗುವುದಿಲ್ಲ; ಅಗಲಿದರೆ ತಂದೆ ಸತ್ತುಹೋದಾರು,’ ಎಂದು ಒಡೆಯರಾದ ತಮಗೆ ತಿಳಿಸಿದೆವು.</verse>
				<verse number="23">ಅದಕ್ಕೆ ತಾವು, 'ನಿಮ್ಮ ತಮ್ಮನು ಬಾರದಿದ್ದರೆ ನೀವು ಮತ್ತೊಮ್ಮೆ ನನ್ನ ಮುಖವನ್ನು ನೋಡಕೂಡದು,’ ಎಂದು ಆಜ್ಞೆಕೊಟ್ಟಿರಿ.</verse>
				<verse number="24">“ತಮ್ಮ ಸೇವಕರಾದ ನಾವು ನಮ್ಮ ತಂದೆಯ ಬಳಿಗೆ ಹೋದಾಗ ಒಡೆಯರ ಮಾತನ್ನು ತಿಳಿಸಿದೆವು.</verse>
				<verse number="25">ನಮ್ಮ ತಂದೆ, ‘ನೀವು ಇನ್ನೊಮ್ಮೆ ಹೋಗಿ ಧಾನ್ಯ ಕೊಂಡುಕೊಂಡು ಬನ್ನಿ’ ಎಂದಾಗ,</verse>
				<verse number="26">ನಾವು, ‘ಹೋಗಲಾಗದು, ತಮ್ಮನು ನಮ್ಮ ಜೊತೆಯಲ್ಲಿ ಇಲ್ಲವಾದರೆ ಆ ಮನುಷ್ಯನ ಮುಖವನ್ನು ನೋಡಲಾಗದು. ತಮ್ಮನು ನಮ್ಮ ಸಂಗಡ ಬಂದರೆ ಮತ್ತೆ ಹೋಗುತ್ತೇವೆ’ ಎಂದು ಹೇಳಿದೆವು.</verse>
				<verse number="27">ಅದಕ್ಕೆ ತಮ್ಮ ಸೇವಕರಾದ ನಮ್ಮ ತಂದೆ, ‘ನನ್ನ ಪತ್ನಿಯಲ್ಲಿ ನನಗೆ ಇಬ್ಬರೇ ಗಂಡು ಮಕ್ಕಳು ಹುಟ್ಟಿದರೆಂಬುದು ನಿಮಗೆ ತಿಳಿದ ವಿಷಯ.</verse>
				<verse number="28">ಅವರಲ್ಲಿ ಒಬ್ಬನು ನನ್ನನ್ನು ಬಿಟ್ಟು ಹೊರಟುಹೋದ; ಅವನು ನಿಸ್ಸಂದೇಹವಾಗಿ ಕಾಡುಮೃಗದಿಂದ ಸೀಳಿಹಾಕಲ್ಪಟ್ಟಿರಬೇಕು ಎಂದು ತಿಳಿದುಕೊಂಡೆ; ಅಂದಿನಿಂದ ಅವನನ್ನು ನಾನು ಕಂಡಿಲ್ಲ.</verse>
				<verse number="29">ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಏನಾದರು ಆಪತ್ತು ಒದಗಿದರೆ, ಈ ನರೆಕೂದಲಿನ ಮುದುಕ ಸಂಕಟದಿಂದ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ’ ಎಂದರು.</verse>
				<verse number="30">\ತಮ್ಮ ಸೇವಕರಾದ ನನ್ನ ತಂದೆಯ ಬಳಿಗೆ ನಾನು ಸೇರಿದಾಗ, ಅವರ ಪ್ರಾಣದ ಪ್ರಾಣವಾಗಿರುವ ಈ ಹುಡುಗ ನನ್ನ ಸಂಗಡ ಇಲ್ಲದೆ ಹೋದರೆ, ಹುಡುಗ ಬರಲಿಲ್ಲವೆಂದು ಅವರು ಕೂಡಲೆ ಸಾಯುವರು.</verse>
				<verse number="31">ಆಗ ತಮ್ಮ ಸೇವಕರಾದ ನಾವು, ತಮ್ಮ ಸೇವಕ ಹಾಗು ನರೆಕೂದಲಿನ ಮುದುಕ ಆದ ನಮ್ಮ ತಂದೆ ಸಂಕಟದಿಂದಲೆ ಸಮಾಧಿ ಸೇರಲು ಕಾರಣರಾಗುತ್ತೇವೆ.</verse>
				<verse number="32">ಸೇವಕನಾದ ನಾನು ನನ್ನ ತಂದೆಯ ಬಳಿಯಲ್ಲಿ ಈ ಹುಡುಗನಿಗೆ ಹೊಣೆಯಾಗಿದ್ದೇನೆ. ‘ನಾನು ಇವನನ್ನು ನಿಮ್ಮ ಬಳಿಗೆ ಕರೆದುಕೊಂಡು ಬಾರದಿದ್ದರೆ, ತಂದೆಗೆ ತಪ್ಪಿದವನ ದೋಷ ಸದಾಕಾಲ ನನ್ನದಾಗಲಿ’ ಎಂದು ಮಾತುಕೊಟ್ಟೆ.</verse>
				<verse number="33">ಆದುದರಿಂದ ತಮ್ಮಲ್ಲಿ ನಾನು ಮಾಡುವ ಪ್ರಾರ್ಥನೆ ಇದು; ಈ ಹುಡುಗನಿಗೆ ಬದಲಾಗಿ, ತಮ್ಮ ಸೇವಕನಾದ ನನ್ನನ್ನು ತಮ್ಮ ಗುಲಾಮನನ್ನಾಗಿ ಇರಿಸಿಕೊಳ್ಳಿ; ಇವನು ತನ್ನ ಅಣ್ಣಂದಿರ ಸಂಗಡ ಹೋಗುವಂತೆ ಅನುಗ್ರಹಿಸಿ.</verse>
				<verse number="34">ಈ ಹುಡುಗನನ್ನು ಬಿಟ್ಟು ನಾನು ನನ್ನ ತಂದೆಯ ಬಳಿಗೆ ಹೇಗೆ ತಾನೆ ಹೋಗಲಾದೀತು? ತಂದೆಗೆ ಉಂಟಾಗುವ ಮನೋಯಾತನೆಯನ್ನು ನನ್ನಿಂದ ನೋಡಲಾಗದು.”</verse>
			</chapter>
			<chapter number="45">
				<verse number="1">ಇದನ್ನು ಕೇಳಿದ ಮೇಲೆ ತನ್ನ ಪರಿವಾರದವರ ಮುಂದೆ, ತನ್ನನ್ನೇ ಇನ್ನು ತಡೆಹಿಡಿದುಕೊಳ್ಳಲು ಜೋಸೆಫನಿಂದ ಆಗಲಿಲ್ಲ. “ಇಲ್ಲಿಂದ ಎಲ್ಲರನ್ನು ಆಚೆ ಕಳಿಸಿರಿ,” ಎಂದು ಬಾಯ್ತೆರೆದು ಹೇಳಿದ. ಜೋಸೆಫನ ಅಣ್ಣತಮ್ಮಂದಿರಿಗೆ ತನ್ನ ಪರಿಚಯ ಸಿಗುವಂತೆ ಮಾಡುವಾಗ ಇತರರು ಯಾರೂ ಹತ್ತಿರ ಇರಲಿಲ್ಲ.</verse>
				<verse number="2">ಅವನು ಗಟ್ಟಿಯಾಗಿ ಅತ್ತದ್ದು ಈಜಿಪ್ಟಿನವರಿಗೆ ಕೇಳಿಸಿತು; ಫರೋಹನ ಮನೆಯವರಿಗೂ ಆ ಸುದ್ದಿ ಮುಟ್ಟಿತು.</verse>
				<verse number="3">ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನಾನೇ ಜೋಸೆಫ್! ನನ್ನ ತಂದೆ ಇನ್ನೂ ಇದ್ದಾರೋ?” ಎಂದು ಕೇಳಿದ. ಅವರು ತತ್ತರಗೊಂಡು ಉತ್ತರಿಸಲಾರದೆ ಹೋದರು.</verse>
				<verse number="4">ಜೋಸೆಫನು, “ಹತ್ತಿರಕ್ಕೆ ಬನ್ನಿ” ಎನ್ನಲು, ಅವರು ಹತ್ತಿರಕ್ಕೆ ಬಂದರು. ಅವನು ಅವರಿಗೆ, “ಈಜಿಪ್ಟ್ ದೇಶಕ್ಕೆ ಹೋಗಲಿ\ ಎಂದು ನೀವು ಮಾರಿಬಿಟ್ಟ ನಿಮ್ಮ ತಮ್ಮ ಜೋಸೆಫ್ ನಾನೇ.</verse>
				<verse number="5">ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ವ್ಯಸನಪಡಬೇಡಿ, ನಿಮ್ಮನ್ನೇ ನಿಂದಿಸಿಕೊಳ್ಳಬೇಡಿ. ಏಕೆಂದರೆ ಜೀವರಕ್ಷಣೆಗಾಗಿಯೇ ದೇವರು ನನ್ನನ್ನು ನಿಮಗೆ ಮುಂಚಿತವಾಗಿ ಇಲ್ಲಿಗೆ ಕಳುಹಿಸಿದರು.</verse>
				<verse number="6">ದೇಶಕ್ಕೆ ಬರಗಾಲ ಬಂದು ಈಗಾಗಲೇ ಎರಡು ವರ್ಷಗಳಾದವು. ಇನ್ನೂ ಐದು ವರ್ಷಗಳ ಪರ್ಯಂತರ ಬಿತ್ತುವುದಕ್ಕಾಗಲಿ ಕೊಯ್ಯುವುದಕ್ಕಾಗಲಿ ಅವಕಾಶವಿಲ್ಲ.</verse>
				<verse number="7">ನಿಮ್ಮ ಜನ ಧರೆಯಲ್ಲಿ ಉಳಿಯುವಂತೆಯೂ ನೀವು ಈ ವಿಪತ್ತಿಗೆ ಸಿಕ್ಕದೆ ಅಭಿವೃದ್ಧಿಯಾಗುವಂತೆಯೂ ದೇವರು ನನ್ನನ್ನು ನಿಮಗೆ ಮುಂಚಿತವಾಗಿ ಕಳಿಸಿದರು.</verse>
				<verse number="8">ನನ್ನನ್ನು ಇಲ್ಲಿಗೆ ಕಳಿಸಿದವರು ನೀವಲ್ಲ, ದೇವರೇ. ಅವರು ನನ್ನನ್ನು ಫರೋಹನಿಗೆ ಮಂತ್ರಿಯಾಗಿಯೂ ಅವರ ಆಸ್ಥಾನಕ್ಕೆ ಅಧಿಪತಿಯಾಗಿಯೂ ಈಜಿಪ್ಟ್ ದೇಶಕ್ಕೆ ಸರ್ವಾಧಿಕಾರಿಯಾಗಿಯೂ ಮಾಡಿದ್ದಾರೆ.</verse>
				<verse number="9">“ನೀವು ನನ್ನ ತಂದೆಯ ಬಳಿಗೆ ಬೇಗನೆ ಹೋಗಿ ಅವರಿಗೆ, ‘ನಿಮ್ಮ ಮಗ ಜೋಸೆಫ್ ಹೀಗೆನ್ನುತ್ತಾನೆ; ‘ದೇವರು ನನ್ನನ್ನು ಈಜಿಪ್ಟ್ ದೇಶಕ್ಕೆ ಮುಖ್ಯಮಂತ್ರಿಯನ್ನಾಗಿ ನೇಮಿಸಿದ್ದಾರೆ. ನೀವು ತಡಮಾಡದೆ ನನ್ನ ಬಳಿಗೆ ಬರಬೇಕು.</verse>
				<verse number="10">ಗೋಷೆನ್ ಪ್ರಾಂತ್ಯದಲ್ಲಿ ನನ್ನ ಬಳಿಯಲ್ಲೇ ನೀವೂ ನಿಮ್ಮ ಮಕ್ಕಳೂ ಮೊಮ್ಮಕ್ಕಳೂ ದನ, ಕುರಿ ಮೊದಲಾದ ಆಸ್ತಿಪಾಸ್ತಿಗಳ ಸಮೇತ ವಾಸಮಾಡಬಹುದು.</verse>
				<verse number="11">ಬರಗಾಲ ತೀರುವುದಕ್ಕೆ ಇನ್ನೂ ಐದು ವರ್ಷ ಕಳೆಯಬೇಕಾಗಿದೆ. ಆದುದರಿಂದ ನಿಮಗೂ ನಿಮ್ಮ ಕುಟುಂಬಕ್ಕೂ ನಿಮಗಿರುವ ಸಮಸ್ತಕ್ಕೂ ಬಡತನ ತಟ್ಟದಂತೆ ನಾನು ನಿಮ್ಮನ್ನು ಪೋಷಿಸುತ್ತೇನೆ’, ಎಂದು ಹೇಳಿರುವುದಾಗಿ ತಿಳಿಸಿರಿ.</verse>
				<verse number="12">“ನಾನೇ ಖುದ್ದಾಗಿ ನಿಮ್ಮ ಸಂಗಡ ಮಾತಾಡಿದ್ದೇನೆ; ಅದಕ್ಕೆ ನೀವೂ ಸಾಕ್ಷಿ: ನನ್ನ ಒಡಹುಟ್ಟಿದ ಬೆನ್ಯಾಮೀನನೂ ಸಾಕ್ಷಿ:</verse>
				<verse number="13">ಈಜಿಪ್ಟ್ ದೇಶದಲ್ಲಿ ನನಗಿರುವ ಘನತೆ ಗೌರವವನ್ನೂ ನೀವು ಕಂಡದ್ದೆಲ್ಲವನ್ನೂ ತಂದೆಗೆ ತಿಳಿಸಿ, ಬೇಗನೆ ಅವರನ್ನು ಇಲ್ಲಿಗೆ ಕರೆದುಕೊಂಡು ಬನ್ನಿ,” ಎಂದು ಹೇಳಿದನು.</verse>
				<verse number="14">ಬಳಿಕ ಜೋಸೆಫನು ತನ್ನ ತಮ್ಮ ಬೆನ್ಯಾಮೀನನ ಕೊರಳನ್ನು ಅಪ್ಪಿಕೊಂಡು ಅತ್ತನು.</verse>
				<verse number="15">ತನ್ನ ಅಣ್ಣಂದಿರಲ್ಲಿ ಪ್ರತಿಯೊಬ್ಬನಿಗೂ ಮುದ್ದಿಟ್ಟು ಅವರನ್ನು ಅಪ್ಪಿಕೊಂಡು ಕಣ್ಣೀರಿಟ್ಟನು. ತರುವಾಯ ಅವರು ಅವನ ಸಂಗಡ ಮಾತನಾಡತೊಡಗಿದರು.</verse>
				<verse number="16">ಜೋಸೆಫನ ಅಣ್ಣತಮ್ಮಂದಿರು ಬಂದಿರುವ ಸಮಾಚಾರ ಫರೋಹನ ಅರಮನೆಗೆ ತಲುಪಿತು. ಫರೋಹನೂ ಅವನ ಪರಿವಾರದವರೂ ಅದನ್ನು ಕೇಳಿ ಸಂತೋಷಪಟ್ಟರು.</verse>
				<verse number="17">ಫರೋಹನು ಜೋಸೆಫನನ್ನು ಕರೆಸಿ, “ನೀನು ನಿನ್ನ ಸಹೋದರರಿಗೆ ತಿಳಿಸಬೇಕಾದ ನನ್ನ ಆಜ್ಞೆ ಇದು: ‘ನೀವು ನಿಮ್ಮ ವಾಹಕಪಶುಗಳ ಮೇಲೆ ಸಾಮಾನುಗಳನ್ನು ಹೇರಿ ಕಾನಾನ್ ನಾಡಿಗೆ ಹೋಗಿ, ಅಲ್ಲಿಂದ</verse>
				<verse number="18">ನಿಮ್ಮ ತಂದೆಯನ್ನೂ ಕುಟುಂಬದವರನ್ನೂ ನನ್ನ ಬಳಿಗೆ ಕರೆದುಕೊಂಡು ಬರತಕ್ಕದ್ದು. ಈಜಿಪ್ಟ್ ದೇಶದಲ್ಲಿ ನಿಮಗೆ ಅತ್ಯುತ್ತಮವಾದ ಭೂಮಿಯನ್ನು ಕೊಡುವೆನು. ನೀವು ಈ ದೇಶದ ಸುಖಸಂಪತ್ತನ್ನು ಅನುಭವಿಸಬಹುದು.”</verse>
				<verse number="19">ನಿನ್ನ ಸಹೋದರರಿಗೆ ಈ ಆಜ್ಞೆಯನ್ನೂ ತಿಳಿಸು: ‘ನೀವು ನಿಮ್ಮ ಮಡದಿ ಮಕ್ಕಳನ್ನು ಕರೆದುತರಲು ಈಜಿಪ್ಟ್ ದೇಶದ ಬಂಡಿಗಳನ್ನು ತೆಗೆದುಕೊಂಡುಹೋಗಿರಿ: ನಿಮ್ಮ ತಂದೆಯನ್ನು ತಂದು ಸೇರಿಸಿರಿ.</verse>
				<verse number="20">ಆಸ್ತಿಪಾಸ್ತಿಗಳ ವಿಷಯದಲ್ಲಿ ನೀವು ಚಿಂತಿಸಬೇಕಾಗಿಲ್ಲ. ಈಜಿಪ್ಟ್ ದೇಶದ ಅತ್ಯುತ್ತಮವಾದುವುಗಳು ನಿಮ್ಮದಾಗುವುವು'.\</verse>
				<verse number="21">ಯಕೋಬನ ಮಕ್ಕಳು ಅದೇ ಮೇರೆಗೆ ಮಾಡಿದರು. ಫರೋಹನ ಅಪ್ಪಣೆಯ ಪ್ರಕಾರ ಜೋಸೆಫನು ಅವರಿಗೆ ಬಂಡಿಗಳನ್ನೂ ಮಾರ್ಗಕ್ಕೆ ಬೇಕಾದ ಆಹಾರವನ್ನೂ ಕೊಡಿಸಿದನು.</verse>
				<verse number="22">ಅದೂ ಅಲ್ಲದೆ, ಪ್ರತಿಯೊಬ್ಬನಿಗೂ ಶ್ರೇಷ್ಠವಾದ ಹೊಸ ಬಟ್ಟೆಗಳನ್ನು ಕೊಟ್ಟನು. ಬೆನ್ಯಾಮೀನನಿಗಾದರೋ ಮುನ್ನೂರು ಬೆಳ್ಳಿನಾಣ್ಯಗಳನ್ನು ಹಾಗು ಐದು ಶ್ರೇಷ್ಠವಾದ ಹೊಸಬಟ್ಟೆಗಳನ್ನು ಕೊಟ್ಟನು.</verse>
				<verse number="23">ತನ್ನ ತಂದೆಗೆ ಈಜಿಪ್ಟ್ ದೇಶದ ಒಳ್ಳೊಳ್ಳೆಯ ವಸ್ತುಗಳನ್ನೂ ಹತ್ತು ಗಂಡು ಕತ್ತೆಗಳ ಮೇಲೆ ಹೇರಿಸಿದನು. ಅವನ ಪ್ರಯಾಣಕ್ಕೆ ಹತ್ತು ಹೆಣ್ಣು ಕತ್ತೆಗಳ ಮೇಲೆ ದವಸಧಾನ್ಯಗಳನ್ನೂ ಇತರ ಆಹಾರಪದಾರ್ಥಗಳನ್ನೂ ಕಳಿಸಿಕೊಟ್ಟನು.</verse>
				<verse number="24">ತನ್ನ ಅಣ್ಣತಮ್ಮಂದಿರಿಗೆ, “ದಾರಿಯಲ್ಲಿ ಜಗಳವಾಡಬೇಡಿ” ಎಂದು ಬುದ್ಧಿ ಹೇಳಿ, ಅವರನ್ನು ಬೀಳ್ಕೊಟ್ಟನು. ಅವರು ಹೊರಟುಹೋದರು.</verse>
				<verse number="25">ಅವರು ಈಜಿಪ್ಟ್ ದೇಶವನ್ನು ಬಿಟ್ಟು ಕಾನಾನ್ ನಾಡನ್ನು ಸೇರಿದರು.</verse>
				<verse number="26">ತಂದೆ ಯಕೋಬನ ಬಳಿಗೆ ಬಂದು, “ಜೋಸೆಫನು ಇನ್ನೂ ಜೀವದಿಂದಿದ್ದಾನೆ; ಅವನೇ ಈಜಿಪ್ಟ್ ದೇಶದ ಪ್ರಧಾನಮಂತ್ರಿ” ಎಂದು ಅರುಹಿದರು. ಅವನು ಅದನ್ನು ಕೇಳಿ ಸ್ತಬ್ಧನಾದ; ಅವರನ್ನು ನಂಬಲೇ ಇಲ್ಲ.</verse>
				<verse number="27">ಆದರೆ ಜೋಸೆಫನು ಹೇಳಿಕಳಿಸಿದ ಎಲ್ಲ ಮಾತುಗಳನ್ನು ಕೇಳಿ, ತನ್ನ ಪ್ರಯಾಣಕ್ಕಾಗಿ ಅವನಿಂದ ಬಂದಿದ್ದ ಬಂಡಿಗಳನ್ನು ನೋಡಿ ಅವರ ತಂದೆ ಯಕೋಬನಿಗೆ ಹೊಸ ಜೀವ ಬಂದಿತು.</verse>
				<verse number="28">ಕೊನೆಗೆ ಯಕೋಬನು, “ನನ್ನ ಮಗ ಜೋಸೆಫ್ ಜೀವದಿಂದಿದ್ದಾನೆ, ನನಗೆ ಅಷ್ಟೇ ಸಾಕು! ನಾನು ಸಾಯುವುದಕ್ಕೆ ಮುಂಚೆ ಹೋಗಿ ಅವನನ್ನು ನೋಡುತ್ತೇನೆ,” ಎಂದನು.</verse>
			</chapter>
			<chapter number="46">
				<verse number="1">ಯಕೋಬನು ತನಗಿದ್ದ ಸರ್ವಸ್ವವನ್ನು ತೆಗೆದುಕೊಂಡು ಪ್ರಯಾಣಮಾಡಿ ಬೇರ್ಷೆಬಕ್ಕೆ ಬಂದನು. ಅಲ್ಲಿ ತನ್ನ ತಂದೆ ಇಸಾಕನ ದೇವರಿಗೆ ಬಲಿದಾನಗಳನ್ನು ಅರ್ಪಿಸಿದನು.</verse>
				<verse number="2">ಆ ರಾತ್ರಿ ದೇವರು ಯಕೋಬನಿಗೆ ದರ್ಶನವಿತ್ತು, “ಯಕೋಬನೇ, ಯಕೋಬನೇ,” ಎಂದು ಕರೆಯಲು, ಅವನು, \ಇಗೋ, ಸಿದ್ಧನಿದ್ದೇನೆ,” ಎಂದನು.</verse>
				<verse number="3">ಆಗ ದೇವರು, “ನಾನೇ ದೇವರು, ನಿನ್ನ ತಂದೆ ಆರಾಧಿಸಿದ ದೇವರು, ನೀನು ಈಜಿಪ್ಟ್ ದೇಶಕ್ಕೆ ಹೋಗಲು ಅಂಜಬೇಡ; ಅಲ್ಲಿ ನಿನ್ನಿಂದ ಮಹಾಜನಾಂಗ ಉತ್ಪನ್ನವಾಗುವಂತೆ ಮಾಡುವೆನು;</verse>
				<verse number="4">ನಾನೇ ನಿನ್ನೊಂದಿಗೆ ಈಜಿಪ್ಟಿಗೆ ಬರುವೆನು. ಅಲ್ಲಿಂದ ನಿನ್ನನ್ನು ನಿಶ್ಚಯವಾಗಿ ವಾಪಸ್ಸು ಕರೆದುಕೊಂಡು ಬರುವೆನು. ನೀನು ಸಾಯುವ ಕಾಲದಲ್ಲಿ ಜೋಸೆಫನು ಹಾಜರಿದ್ದು ನಿನ್ನ ಕಣ್ಣುಗಳನ್ನು ಮುಚ್ಚುವನು,” ಎಂದರು.</verse>
				<verse number="5">ಬಳಿಕ ಯಕೋಬನು ಬೇರ್ಷೆಬದಿಂದ ಪ್ರಯಾಣ ಮಾಡಿದನು. ಯಕೋಬನ ಮಕ್ಕಳು ತಮ್ಮ ತಂದೆಯಾದ ಯಕೋಬನನ್ನು ಮತ್ತು ತಮ್ಮ ಮಡದಿಮಕ್ಕಳನ್ನು ಫರೋಹನು ಕಳಿಸಿದ್ದ ಬಂಡಿಗಳಲ್ಲಿ ಕೂರಿಸಿಕೊಂಡು ಹೊರಟರು..</verse>
				<verse number="6">ಕಾನಾನ್ ನಾಡಿನಲ್ಲಿ ತಾವು ಸಂಪಾದಿಸಿದ್ದ ಆಸ್ತಿಪಾಸ್ತಿಯನ್ನೂ ದನಕುರಿಗಳನ್ನೂ ತೆಗೆದುಕೊಂಡು ಈಜಿಪ್ಟ್ ದೇಶವನ್ನು ತಲುಪಿದರು.</verse>
				<verse number="7">ಹೀಗೆ ಯಕೋಬನು ತನ್ನ ಗಂಡು ಹೆಣ್ಣು ಮಕ್ಕಳನ್ನೂ ಮೊಮ್ಮಕ್ಕಳನ್ನೂ ತನ್ನ ಕುಟುಂಬದವರೆಲ್ಲರನ್ನೂ ತನ್ನ ಸಂಗಡವೇ ಕರೆದುಕೊಂಡು ಈಜಿಪ್ಟಿಗೆ ಬಂದನು.</verse>
				<verse number="8">ಈಜಿಪ್ಟಿಗೆ ಬಂದು ಸೇರಿದ ಯಕೋಬನ ಮತ್ತು ಅವನ ಮಕ್ಕಳಾದ ಇಸ್ರಯೇಲರ ಹೆಸರುಗಳು ಇವು - ಯಕೋಬನ ಜೇಷ್ಠ ಪುತ್ರ ರೂಬೇನನು.</verse>
				<verse number="9">ರೂಬೇನನ ಮಕ್ಕಳು - ಹನೋಕ್, ಫಲ್ಲೂ, ಹೆಚ್ರೋನ್ ಮತ್ತು ಕರ್ಮೀ.</verse>
				<verse number="10">ಸಿಮೆಯೋನನ ಮಕ್ಕಳು - ಯೆಮೂವೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಮಹಿಳೆಯಲ್ಲಿ ಹುಟ್ಟಿದ ಸೌಲ.</verse>
				<verse number="11">ಲೇವಿಯ ಮಕ್ಕಳು - ಗೆರ್ಷೋನ್, ಕೆಹಾತ್ ಮತ್ತು ಮೆರಾರಿ.</verse>
				<verse number="12">ಯೆಹೂದನ ಮಕ್ಕಳು - ಏರ್, ಓನಾನ್, ಶೆಲಾಹ, ಪೆರೆಜ್ ಮತ್ತು ಜೆರಹ (ಇವರಲ್ಲಿ ಏರ್ ಹಾಗೂ ಓನಾನ್ ಕಾನಾನ್ ನಾಡಿನಲ್ಲೇ ಕಾಲವಾಗಿದ್ದರು). ಪೆರೆಚನ ಮಕ್ಕಳು - ಹೆಚ್ರೋನ್ ಮತ್ತು ಹಾಮೂಲ್.</verse>
				<verse number="13">ಇಸ್ಸಾಕಾರನ ಮಕ್ಕಳು - ತೋಲಾ, ಪುವ್ವಾ, ಯೋಬ್ ಮತ್ತು‍ ಶಿಮ್ರೋನ್.</verse>
				<verse number="14">ಜೆಬುಲೂನನ ಮಕ್ಕಳು - ಸೆರೆದ್, ಏಲೋನ್ ಮತ್ತು ಯಹ್ಲೇಲ್.</verse>
				<verse number="15">ಇವರೆಲ್ಲರು ಲೇಯಳ ಸಂತತಿಯವರು. ಆಕೆ ಯಕೋಬನಿಗೆ ಇವರನ್ನಲ್ಲದೆ ದೀನಳೆಂಬ ಮಗಳನ್ನೂ ಮೆಸಪೊಟೇಮಿಯಾದಲ್ಲಿ ಪಡೆದಳು. ಆಕೆಯಿಂದಾದ ಗಂಡು ಹೆಣ್ಣು ಮಕ್ಕಳು ಒಟ್ಟು ಮೂವತ್ತು ಮಂದಿ.</verse>
				<verse number="16">ಗಾದನ ಮಕ್ಕಳು - ಚಿಪ್ಯೋನ್, ಹಗ್ಗಿ, ಶೂನೀ, ಎಚ್ಬೋನ್, ಏರಿ, ಅರೋದಿ ಮತ್ತು ಅರೇಲಿ.</verse>
				<verse number="17">ಅಶೇರನ ಮಕ್ಕಳು - ಇಮ್ನಾ, ಇಷ್ವಾ, ಇಷಿವೀ, ಬೆರೀಗಾ ಮತ್ತು ಇವರ ತಂಗಿ ಸೆರಹ; ಬೆರೀಗಾನ ಮಕ್ಕಳು - ಹೆಬೆರ್ ಮತ್ತು ಮಲ್ಕೀಯೇಲ್;</verse>
				<verse number="18">ಇವರು ಲಾಬಾನನು ತನ್ನ ಮಗಳಾದ ಲೇಯಳಿಗೆ ದಾಸಿಯಾಗಿ ಕೊಟ್ಟ ಜಿಲ್ಪಳ ಸಂತತಿಯವರು. ಈಕೆಯಿಂದ ಯಕೋಬನಿಗಾದ ಮಕ್ಕಳು ಮತ್ತು ಮೊಮ್ಮಕ್ಕಳು ಒಟ್ಟು ಹದಿನಾರು ಮಂದಿ.</verse>
				<verse number="19">ಯಕೋಬನ ಹೆಂಡತಿಯಾದ ರಾಖೇಲಳ ಮಕ್ಕಳು - ಜೋಸೆಫ್ ಮತ್ತು ಬೆನ್ಯಾಮೀನ್.</verse>
				<verse number="20">ಈಜಿಪ್ಟಿನಲ್ಲಿ ಜೋಸೆಫನಿಗೆ ಓನ್ ಪಟ್ಟಣದ ಆಚಾರ್ಯ ಪೋಟೀಫೆರನ ಮಗಳಾದ ಆಸನತ್ ಎಂಬಾಕೆಯಲ್ಲಿ ಹುಟ್ಟಿದ ಮನಸ್ಸೆ ಮತ್ತು ಎಫ್ರಯಿಮ್.</verse>
				<verse number="21">ಬೆನ್ಯಾಮೀನನ ಮಕ್ಕಳು - ಬಿಳಾ, ಬೆಕೆರ್, ಅಶ್ಬೇಲ್, ಗೇರಾ, ನಾಮಾನ್, ಏಹೀರೋಷ್, ಮುಪ್ಪೀಮ್, ಹುಪ್ಪೀಮ್ ಮತ್ತು ಆರ್ದಾ.</verse>
				<verse number="22">ಈ ಹದಿನಾಲ್ಕು ಮಂದಿ ರಾಖೇಲಳ ಮೂಲಕ ಯಕೋಬನಿಂದಾದ ಸಂತತಿಯವರು.</verse>
				<verse number="23">ದಾನನ ಮಗ - ಹುಶೀಮ್.</verse>
				<verse number="24">ನಪ್ತಾಲಿಯ ಮಕ್ಕಳು - ಯಹೇಲ್, ಗೂನಿ, ಯೇಚರ್ ಮತ್ತು ಶಿಲ್ಲೇಮ್;</verse>
				<verse number="25">ಇವರು ಲಾಬಾನನು ತನ್ನ ಮಗಳು ರಾಖೇಲಳಿಗೆ ಕೊಟ್ಟ ದಾಸಿ ಬಿಲ್ಹಳ ಸಂತತಿಯವರು. ಈಕೆಯಿಂದ ಯಕೋಬನಿಗಾದ ಮಕ್ಕಳು ಮತ್ತು ಮೊಮ್ಮಕ್ಕಳು ಒಟ್ಟು ಏಳು ಮಂದಿ.</verse>
				<verse number="26">ಯಕೋಬನ ಸೊಸೆಯರಲ್ಲದೆ ಯಕೋಬನಿಂದಲೇ ಹುಟ್ಟಿ ಅವನೊಂದಿಗೆ ಈಜಿಪ್ಟ್ ದೇಶಕ್ಕೆ ಹೋದವರು ಒಟ್ಟು ಅರವತ್ತಾರು ಮಂದಿ.</verse>
				<verse number="27">ಅವರಲ್ಲದೆ ಈಜಿಪ್ಟ್ ದೇಶದಲ್ಲಿ ಜೋಸೆಫನಿಗೆ ಹುಟ್ಟಿದವರು ಇಬ್ಬರು. ಈಜಿಪ್ಟ್ ದೇಶಕ್ಕೆ ಹೋದ ಯಕೋಬನ ಕುಟುಂಬದವರೆಲ್ಲರು ಒಟ್ಟಾಗಿ ಎಪ್ಪತ್ತು ಮಂದಿ.</verse>
				<verse number="28">ಗೋಷೆನ್ ಪ್ರಾಂತದಲ್ಲಿ ಜೋಸೆಫ್ ತನ್ನನ್ನು ಭೇಟಿಯಾಗಬೇಕೆಂದು ತಿಳಿಸಲು ಯಕೋಬನು ಯೆಹೂದನನ್ನು ಮುಂದಾಗಿ ಜೋಸೆಫನ ಬಳಿಗೆ ಕಳಿಸಿದನು. ಅವರೆಲ್ಲರು ಗೋಷೆನ್ ಪ್ರಾಂತ್ಯವನ್ನು ಬಂದು ಸೇರಿದರು.</verse>
				<verse number="29">ಜೋಸೆಫನು ರಥವನ್ನೇರಿ ತನ್ನ ತಂದೆ ಯಕೋಬನನ್ನು ಭೇಟಿಯಾಗಲು ಗೋಷೆನಿಗೆ ಬಂದನು. ತಂದೆಯನ್ನು ಕಂಡೊಡನೆ ಅವರ ಕೊರಳನ್ನು ಅಪ್ಪಿಕೊಂಡು ಬಹಳ ಹೊತ್ತು ಅತ್ತನು.</verse>
				<verse number="30">ಯಕೋಬನು ಜೋಸೆಫನಿಗೆ, “ಇನ್ನು ನಾನು ಸಂತೃಪ್ತಿಯಾಗಿ ಸಾಯುವೆನು. ನೀನು ಇನ್ನೂ ಬದುಕಿರುವೆಯೆಂದು ಕೇಳಿದ್ದಾಯಿತು; ನಿನ್ನ ಮುಖವನ್ನು ಕಣ್ಣಾರೆ ನೋಡಿದ್ದಾಯಿತು,” ಎಂದನು.</verse>
				<verse number="31">ತರುವಾಯ ಜೋಸೆಫನು ತನ್ನ ಅಣ್ಣತಮ್ಮಂದಿರನ್ನೂ ತಂದೆಯ ಮನೆಯವರೆಲ್ಲರನ್ನೂ ನೋಡಿ, “ನಾನು ಫರೋಹನ ಸನ್ನಿಧಿಗೆ ಹೋಗಿ ನೀವು ಬಂದಿರುವ ಸಮಾಚಾರವನ್ನು ತಿಳಿಸಿ, ‘ಕಾನಾನ್ ನಾಡಿನಲ್ಲಿದ್ದ ನನ್ನ ಸಹೋದರರೂ ನನ್ನ ತಂದೆಯೂ, ಕುಟುಂಬದವರೂ ನನ್ನ ಬಳಿಗೆ ಬಂದಿದ್ದಾರೆ.</verse>
				<verse number="32">ಅವರು ಕುರಿಕಾಯುವವರು, ಮಂದೆ ಮೇಯಿಸುವುದು ಅವರ ಕಸುಬು. ಅವರು ತಮ್ಮ ಕುರಿದನಗಳನ್ನೂ ತಮಗಿದ್ದ ಎಲ್ಲವನ್ನೂ ತಂದಿದ್ದಾರೆ,’ ಎಂದು ಹೇಳುತ್ತೇನೆ.</verse>
				<verse number="33">ಫರೋಹನು ನಿಮ್ಮನ್ನು ಕರೆಸಿ, ‘ನಿಮ್ಮ ಕಸುಬು ಏನೆಂದು ಕೇಳಿದರೆ,</verse>
				<verse number="34">'ಚಿಕ್ಕಂದಿನಿಂದ ಇಂದಿನವರೆಗೂ ನಿಮ್ಮ ಸೇವಕರಾದ ನಾವು, ನಮ್ಮ ಪೂರ್ವಜರ ಪದ್ಧತಿಯಂತೆ ಮಂದೆ ಮೇಯಿಸುವವರು,’ ಎಂದು ಹೇಳಿರಿ. ಆಗ ಗೋಷೆನ್ ಪ್ರಾಂತ್ಯವನ್ನು ನಿಮ್ಮ ನಿವಾಸಕ್ಕೆ ನೇಮಿಸುವನು - ಏಕೆಂದರೆ ಕುರಿ ಕಾಯುವವರೆಂದರೆ ಈಜಿಪ್ಟಿಯರಿಗೆ ಹಿಡಿಸದು,” ಎಂದು ಹೇಳಿದನು.</verse>
			</chapter>
			<chapter number="47">
				<verse number="1">ಜೋಸೆಫನು ಫರೋಹನ ಬಳಿಗೆ ಬಂದು, “ನನ್ನ ತಂದೆಯೂ ಸಹೋದರರೂ ದನಕುರಿಗಳನ್ನು ಹಾಗೂ ಎಲ್ಲ ಆಸ್ತಿಪಾಸ್ತಿಯನ್ನು ತೆಗೆದುಕೊಂಡು ಕಾನಾನ್ ನಾಡಿನಿಂದ ಗೋಷೆನ್ ಪ್ರಾಂತ್ಯಕ್ಕೆ ಬಂದಿದ್ದಾರೆ,” ಎಂದು ತಿಳಿಸಿದನು.</verse>
				<verse number="2">ಅದು ಮಾತ್ರವಲ್ಲ, ತನ್ನ ಅಣ್ಣತಮ್ಮಂದಿರಲ್ಲಿ ಐದು ಮಂದಿಯನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು.</verse>
				<verse number="3">ಫರೋಹನು, “ನಿಮ್ಮ ಕಸುಬು ಏನು”, ಎಂದು ಕೇಳಲು ಅವರು, “ನಿಮ್ಮ ಸೇವಕರಾದ ನಾವು ನಮ್ಮ ಪೂರ್ವಜರ ಪದ್ಧತಿಯ ಮೇರೆಗೆ ಕುರಿ ಕಾಯುವವರು;</verse>
				<verse number="4">ಕಾನಾನ್ ನಾಡಿನಲ್ಲಿ ಬರವು ಘೋರವಾದ್ದರಿಂದ ನಿಮ್ಮ ಸೇವಕರ ದನಕುರಿಗಳಿಗೆ ಮೇವು ಸಿಕ್ಕಲಿಲ್ಲ. ಆದ್ದರಿಂದ ಈ ದೇಶದಲ್ಲಿ ಸ್ವಲ್ಪಕಾಲ ಇರಬೇಕೆಂದು ಬಂದಿದ್ದೇವೆ. ಸೇವಕರು ಗೋಷೆನ್ ಪ್ರಾಂತ್ಯದಲ್ಲಿ ವಾಸಮಾಡುವಂತೆ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದರು.</verse>
				<verse number="5">ಫರೋಹನು ಜೋಸೆಫನಿಗೆ, “ನಿನ್ನ ತಂದೆಯೂ ಅಣ್ಣತಮ್ಮಂದಿರು ನಿನ್ನ ಬಳಿಗೆ ಬಂದಿದ್ದಾರಲ್ಲವೆ?</verse>
				<verse number="6">ಈಜಿಪ್ಟ್ ದೇಶವು ನಿನ್ನ ಮುಂದಿದೆ; ಅದರಲ್ಲಿನ ಉತ್ತಮ ಭಾಗವನ್ನು ನಿನ್ನ ತಂದೆಗೂ ಸಹೋದರರಿಗೂ ವಾಸಸ್ಥಾನವಾಗಿ ನೇಮಿಸು; ಗೋಷೆನ್ ಪ್ರಾಂತ್ಯದಲ್ಲಿ ಬೇಕಾದರೆ ವಾಸಮಾಡಲಿ; ಅವರಲ್ಲಿ ನುರಿತವರು ಯಾರಾದರು ಇದ್ದರೆ ಅವರನ್ನು ನನ್ನ ದನಕರುಗಳ ಮೇಲ್ವಿಚಾರಣೆಗೆ ನೇಮಿಸು,” ಎಂದನು.</verse>
				<verse number="7">ಬಳಿಕ ಜೋಸೆಫನು ತನ್ನ ತಂದೆ ಯಕೋಬನನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು. ಯಕೋಬನು ಫರೋಹನನ್ನು ಆಶೀರ್ವದಿಸಿದನು.</verse>
				<verse number="8">ಫರೋಹನು, “ನಿನಗೆಷ್ಟು ವರ್ಷ?” ಎಂದು ಕೇಳಿದನು.</verse>
				<verse number="9">ಯಕೋಬನು, “ನನ್ನ ಬಾಳಿನ ಪಯಣದ ದಿನಗಳು ನೂರ ಮೂವತ್ತು ವರ್ಷಗಳಷ್ಟೇ. ಎಣಿಕೆಯಲ್ಲಿ ಅವು ಕಮ್ಮಿ; ಕಷ್ಟದುಃಖದಲ್ಲಿ ಜಾಸ್ತಿ; ನನ್ನ ಪೂರ್ವಜರು ಬಾಳಿದಷ್ಟು ವರ್ಷಗಳು ನನಗಾಗಿಲ್ಲ,” ಎಂದು ಹೇಳಿ</verse>
				<verse number="10">ಫರೋಹನನ್ನು ಆಶೀರ್ವದಿಸಿ, ಅವನ ಸನ್ನಿಧಿಯಿಂದ ಹೊರಟುಹೋದನು.</verse>
				<verse number="11">ಫರೋಹನ ಅಪ್ಪಣೆಯ ಮೇರೆಗೆ ಜೋಸೆಫನು ತನ್ನ ತಂದೆಗೂ ಅಣ್ಣತಮ್ಮಂದಿರಿಗೂ ಈಜಿಪ್ಟಿನಲ್ಲಿ ವಾಸಸ್ಥಾನವನ್ನು ನೇಮಿಸಿ, ಅದರಲ್ಲಿ ಉತ್ತಮವಾಗಿದ್ದ ರಮ್ಸೇಸ್ ಪ್ರದೇಶದಲ್ಲಿ ಸೊತ್ತನ್ನು ಕೊಟ್ಟನು.</verse>
				<verse number="12">ತಂದೆಗೂ ಸಹೋದರರಿಗೂ ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರಕೊಟ್ಟು ಅವರನ್ನು ಸಂರಕ್ಷಿಸಿದನು.</verse>
				<verse number="13">ಬರವು ಬಹು ಘೋರವಾಗಿತ್ತು. ದೇಶದ ಯಾವ ಭಾಗದಲ್ಲೂ ಆಹಾರ ಸಿಕ್ಕುತ್ತಿರಲಿಲ್ಲ. ಈ ನಿಮಿತ್ತ ಈಜಿಪ್ಟ್ ದೇಶವೂ ಕಾನಾನ್ ನಾಡೂ ಹಾಗೆ ಸೊರಗಿಹೋಗುತ್ತಿದ್ದುವು.</verse>
				<verse number="14">ಜೋಸೆಫನು ಈಜಿಪ್ಟ್ ದೇಶದವರಿಗೂ ಕಾನಾನ್ ನಾಡಿಗರಿಗೂ ದವಸಧಾನ್ಯ ಮಾರಿ ಬಂದ ಹಣದಿಂದ ಫರೋಹನ ಬೊಕ್ಕಸವನ್ನು ತುಂಬಿದನು.</verse>
				<verse number="15">ಈಜಿಪ್ಟಿನ ಹಾಗೂ ಕಾನಾನಿನ ಹಣವೆಲ್ಲ ಮುಗಿದುಹೋದಾಗ ಈಜಿಪ್ಟಿನವರು ಜೋಸೆಫನ ಬಳಿಗೆ ಬಂದು, “ನಾವೇಕೆ ನಿಮ್ಮ ಕಣ್ಮುಂದೆ ಸಾಯಬೇಕು? ನಮಗೆ ಆಹಾರ ಕೊಡಿ, ನಮ್ಮ ಹಣ ಮುಗಿದುಹೋಯಿತು,” ಎಂದರು.</verse>
				<verse number="16">ಜೋಸೆಫನು, “ನಿಮ್ಮ ದನಕರುಗಳನ್ನು ತನ್ನಿ, ಹಣವಿಲ್ಲದಿದ್ದರೆ ದನಕರುಗಳನ್ನು ತೆಗೆದುಕೊಂಡು ಧಾನ್ಯ ಕೊಡಿಸುತ್ತೇನೆ,” ಎಂದನು.</verse>
				<verse number="17">ಅವರು ತಮ್ಮ ಪಶುಪ್ರಾಣಿಗಳನ್ನು ಜೋಸೆಫನ ಬಳಿಗೆ ತಂದರು. ಅವನು ಅವರ ಕುದುರೆಗಳನ್ನೂ ದನಕುರಿಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯ ಕೊಡಿಸಿದನು. ಹೀಗೆ ಆ ವರ್ಷ ಅವರ ಪಶುಪ್ರಾಣಿಗಳನ್ನು ಪಡೆದು, ಧಾನ್ಯಕೊಟ್ಟು ಅವರನ್ನು ಕಾಪಾಡಿದನು.</verse>
				<verse number="18">ಆ ವರ್ಷ ಕಳೆದು ಮಾರನೆಯ ವರ್ಷದಲ್ಲಿ ಅವರು ಅವನ ಬಳಿಗೆ ಬಂದು, “ನಮ್ಮ ಹಣವೆಲ್ಲ ವೆಚ್ಚವಾಯಿತು. ನಮ್ಮ ಪಶುಪ್ರಾಣಿಗಳು ದಣಿಯ ವಶವಾದುವು; ಇನ್ನು ಉಳಿದಿರುವುದು ನಮ್ಮ ಭೂಮಿ ಮತ್ತು ದೇಹಗಳೇ ಹೊರತು ಬೇರೇನೂ ಇಲ್ಲ; ದಣಿಗೆ ಮುಚ್ಚುಮರೆಯಿಲ್ಲದೆ ತಿಳಿಸುತ್ತಿದ್ದೇವೆ.</verse>
				<verse number="19">ನಾವೇಕೆ ನಿಮ್ಮ ಕಣ್ಣೆದುರಿಗೆ ಸಾಯಬೇಕು? ನಮ್ಮ ಭೂಮಿಯೇಕೆ ಹಾಳಾಗಬೇಕು? ನಮ್ಮನ್ನೂ ನಮ್ಮ ಭೂಮಿಯನ್ನೂ ತೆಗೆದುಕೊಂಡು ಧಾನ್ಯ ಕೊಡಿ, ನಾವು ನಮ್ಮ ಭೂಮಿಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವರಿಗೆ ಗುಲಾಮರಾಗುತ್ತೇವೆ. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂಮಿ ಪಾಳುಬೀಳಬಾರದಿದ್ದರೆ ಧಾನ್ಯಕೊಡಿ,” ಎಂದು ಕೇಳಿದರು.</verse>
				<verse number="20">ಜೋಸೆಫ್ ಈಜಿಪ್ಟ್ ದೇಶದ ಎಲ್ಲ ಸಾಗುವಳಿ ಭೂಮಿಯನ್ನು ಫರೋಹನಿಗಾಗಿ ಕೊಂಡುಕೊಂಡನು. ಬರದ ಘೋರತೆಯಿಂದಾಗಿ ಈಜಿಪ್ಟಿನವರು ತಮ್ಮ ತಮ್ಮ ಹೊಲಗದ್ದೆಗಳನ್ನು ಮಾರಿಬಿಟ್ಟರು. ಹೀಗೆ ಸಾಗುವಳಿ ಭೂಮಿಯೆಲ್ಲ ಫರೋಹನದಾಯಿತು.</verse>
				<verse number="21">ಈಜಿಪ್ಟಿನ ಎಲ್ಲೆಯಿಂದ ಎಲ್ಲೆಯವರೆಗೆ ಜನರನ್ನು ಊಳಿಗಕ್ಕೆ ಈಡುಮಾಡಿದನು.</verse>
				<verse number="22">ಅರ್ಚಕರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಏಕೆಂದರೆ ಅವರಿಗೆ ಫರೋಹನಿಂದ ಭತ್ಯ ದೊರಕುತ್ತಿತ್ತು. ಆ ಭತ್ಯದಿಂದ ಜೀವನ ನಡೆಸುತ್ತಿದ್ದ ಆ ಅರ್ಚಕರು ತಮ್ಮ ಭೂಮಿಯನ್ನು ಮಾರಲಿಲ್ಲ.</verse>
				<verse number="23">ಜೋಸೆಫನು ಪ್ರಜೆಗಳಿಗೆ, “ನಾನು ಈ ದಿನ ನಿಮ್ಮನ್ನೂ ನಿಮ್ಮ ಭೂಮಿಯನ್ನೂ ಫರೋಹನಿಗಾಗಿ ಕೊಂಡುಕೊಂಡಿದ್ದೇನೆಂದು ತಿಳಿದುಕೊಳ್ಳಿ. ಇಗೋ, ಬಿತ್ತನೆಗಾಗಿ ನಿಮಗೆ ಬೀಜವನ್ನು ಕೊಟ್ಟಿದ್ದೇನೆ. ಭೂಮಿಯಲ್ಲಿ ಬಿತ್ತಿರಿ.</verse>
				<verse number="24">ಕೊಯ್ದು ಕಾಲದಲ್ಲಿ ಐದರಲ್ಲೊಂದು ಪಾಲು ಫರೋಹನಿಗೆ ಸಲ್ಲಬೇಕು. ಮಿಕ್ಕ ನಾಲ್ಕು ಪಾಲು ನಿಮ್ಮದು. ಅದನ್ನು ಬಿತ್ತನೆಗಾಗಿ ಮತ್ತು ನಿಮ್ಮ ಮನೆಯವರ ಹಾಗು ಕುಟುಂಬದವರ ಜೀವನಕ್ಕಾಗಿ ಇಟ್ಟುಕೊಳ್ಳಿ,” ಎಂದು ಹೇಳಿದನು.</verse>
				<verse number="25">ಅದಕ್ಕೆ ಅವರು, ನಮ್ಮ ಪ್ರಾಣಗಳನ್ನು ಉಳಿಸಿದ್ದೀರಿ. ನಮ್ಮ ದಣಿಗಳಾದ ನಿಮ್ಮ ದಯೆ ನಮ್ಮ ಮೇಲಿರಲಿ; ನಾವು ಫರೋಹನಿಗೆ ಊಳಿಗದವರಾಗಿರುತ್ತೇವೆ,” ಎಂದರು.</verse>
				<verse number="26">ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲತಕ್ಕದ್ದು ಎಂಬ ಯೋಜನೆಯನ್ನು ಜೋಸೆಫನು ಈಜಿಪ್ಟ್ ದೇಶದ ಒಂದು ಶಾಸನವನ್ನಾಗಿ ಮಾಡಿದನು. ಈ ದಿನದವರೆಗೂ ಆ ಶಾಸನ ರೂಢಿಯಲ್ಲಿದೆ. ಅರ್ಚಕರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ.</verse>
				<verse number="27">ಇಸ್ರಯೇಲರು ಈಜಿಪ್ಟ್ ದೇಶಕ್ಕೆ ಸೇರಿದ ಗೋಷೆನ್ ಪ್ರಾಂತ್ಯದಲ್ಲಿ ವಾಸಮಾಡಿದರು. ಅಲ್ಲಿ ಅವರು ಆಸ್ತಿಪಾಸ್ತಿಯನ್ನು ಸಂಪಾದಿಸಿಕೊಂಡು ಬಹು ಸಂತಾನವುಳ್ಳವರಾಗಿ ಅಭಿವೃದ್ಧಿಯಾದರು.</verse>
				<verse number="28">ಯಕೋಬನು ಈಜಿಪ್ಟಿನಲ್ಲಿ ಹದಿನೇಳು ವರ್ಷ ಇದ್ದನು. ಅವನ ಜೀವಮಾನ ಕಾಲ ಒಟ್ಟಿಗೆ ನೂರನಲವತ್ತೇಳು ವರ್ಷಗಳು.</verse>
				<verse number="29">ಯಕೋಬನಿಗೆ ಅಂತಿಮಕಾಲ ಹತ್ತಿರ ಆದಾಗ ಅವನು ತನ್ನ ಮಗ ಜೋಸೆಫನನ್ನು ಕರೆಸಿ, “ನನ್ನ ಮೇಲೆ ನಿನಗೆ ಪ್ರೀತಿಯಿದ್ದರೆ ನೀನು ನನ್ನ ಮಾತನ್ನು ಪ್ರೀತಿಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆಸಿಕೊಡಬೇಕು. ಅದೇನೆಂದರೆ; ನನ್ನನ್ನು ಈಜಿಪ್ಟ್ ದೇಶದಲ್ಲಿ ಸಮಾಧಿ ಮಾಡಬಾರದು.</verse>
				<verse number="30">ನಾನು ಮೃತರಾದ ಪಿತೃಗಳೊಂದಿಗೆ ಸೇರಿಕೊಂಡಾಗ, ನನ್ನ ಶವವನ್ನು ಈಜಿಪ್ಟ್ ದೇಶದಿಂದ ತೆಗೆದುಕೊಂಡು ಹೋಗಿ, ಆ ಪಿತೃಗಳ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಬೇಕು. ಹಾಗೆ ಮಾಡುತ್ತೇನೆಂದು ನೀನು ನನ್ನ ತೊಡೆಯ ಕೆಳಗೆ ಕೈಯಿಟ್ಟು ಪ್ರಮಾಣ ಮಾಡಬೇಕು\ ಎಂದು ಕೇಳಿಕೊಂಡನು. ಅವನು, “ನೀನು ಹೇಳಿದಂತೆಯೇ ಮಾಡುತ್ತೇನೆ,” ಎಂದು ಪ್ರಮಾಣ ಮಾಡಿದನು.</verse>
				<verse number="31">ಆಗ ಯಕೋಬನು ಆ ಹಾಸಿಗೆಯ ತಲೆಭಾಗದ ಕಡೆ ಬಾಗಿ ಸ್ತೋತ್ರ ಮಾಡಿದನು.</verse>
			</chapter>
			<chapter number="48">
				<verse number="1">ಕೆಲವು ಕಾಲವಾದ ಮೇಲೆ, “ತಂದೆ ಬಹಳ ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದಾರೆ,” ಎಂಬ ಸುದ್ದಿ ಜೋಸೆಫನಿಗೆ ಬಂದಿತು. ಅವನು ಮನಸ್ಸೆ ಮತ್ತು ಎಫ್ರಯಿಮ್‍ ಎಂಬ ತನ್ನಿಬ್ಬರು ಮಕ್ಕಳನ್ನು ಕರೆದುಕೊಂಡು ತನ್ನ ತಂದೆಯ ಬಳಿಗೆ ಬಂದನು.</verse>
				<verse number="2">“ನಿಮ್ಮ ಮಗ ಜೋಸೆಫನು ಬಂದಿದ್ದಾನೆ,” ಎಂದು ಯಕೋಬನಿಗೆ ತಿಳಿಸಿದಾಗ ಅವನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕುಳಿತುಕೊಂಡನು.</verse>
				<verse number="3">ಅವನು ಜೋಸೆಫನಿಗೆ, “ಸರ್ವವಲ್ಲಭರಾದ ದೇವರು ಕಾನಾನ್ ನಾಡಿನ ಲೂಜಿನಲ್ಲಿ ನನಗೆ ದರ್ಶನಕೊಟ್ಟು, ಆಶೀರ್ವದಿಸಿ -</verse>
				<verse number="4">‘ನಾನು ನಿನ್ನನ್ನು ಫಲಪ್ರದನನ್ನಾಗಿ ಮಾಡಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು; ಅನೇಕ ಜನರಿಗೆ ನಿನ್ನನ್ನು ಮೂಲಪುರುಷನನ್ನಾಗಿ ಮಾಡುವೆನು; ನಿನ್ನ ತರುವಾಯ ನಿನ್ನ ಸಂತತಿಗೆ ಈ ನಾಡನ್ನು ಶಾಶ್ವತ ಸೊತ್ತನ್ನಾಗಿ ಕೊಡುವೆನು,’ ಎಂದು ಹೇಳಿದರು.</verse>
				<verse number="5">“ನಾನು ನಿನ್ನ ಬಳಿಗೆ ಈಜಿಪ್ಟ್ ದೇಶಕ್ಕೆ ಬರುವುದಕ್ಕೆ ಮುಂಚೆ ಇಲ್ಲಿ ಹುಟ್ಟಿದ್ದ ನಿನ್ನಿಬ್ಬರು ಮಕ್ಕಳು ನನ್ನ ಮಕ್ಕಳಾಗಬೇಕು. ರೂಬೇನ್ ಮತ್ತು ಸಿಮೆಯೋನ್ ನನ್ನ ಮಕ್ಕಳಾಗಿರುವಂತೆಯೇ ಎಫ್ರಯಿಮ್ ಮತ್ತು ಮನಸ್ಸೆ ನನ್ನ ಮಕ್ಕಳಾಗಿರಲಿ.</verse>
				<verse number="6">ಅವರ ತರುವಾಯ ನೀನು ಪಡೆದ ಮಕ್ಕಳು ನಿನ್ನವರಾಗಿರಲಿ. ಅವರು ತಮ್ಮ ಅಣ್ಣಂದಿರ ಸೊತ್ತಿಗೆ ಬಾಧ್ಯತೆ ಪಡೆದು ಅವರ ಕುಲದ ಹೆಸರನ್ನೇ ಇಟ್ಟುಕೊಳ್ಳಲಿ.</verse>
				<verse number="7">ಏಕೆಂದರೆ ನಿಮ್ಮ ತಾಯಿ ರಾಖೇಲಳು, ನಾನು ಮೆಸಪೊಟೇಮಿಯಾದಿಂದ ಬರುವಾಗ, ಕಾನಾನ್ ನಾಡಿನಲ್ಲಿ ಎಫ್ರಾತನ್ನು ಸೇರುವುದಕ್ಕೆ ಇನ್ನು ಸ್ವಲ್ಪ ದೂರ ಇದ್ದಾಗಲೆ ದಾರಿಯಲ್ಲಿ ಸತ್ತು ನನ್ನನ್ನು ಅಗಲಿಹೋದಳು. ಈಗ ಬೇತ್ಲೆಹೇಮ್ ಎನಿಸಿಕೊಳ್ಳುವ ಎಫ್ರಾತಿಗೆ ಹೋಗುವ ದಾರಿಪಕ್ಕದಲ್ಲಿ ಆಕೆಯನ್ನು ಸಮಾಧಿಮಾಡಿದೆ,” ಎಂದು ಹೇಳಿದನು.</verse>
				<verse number="8">ಯಕೋಬನು ಜೋಸೆಫನ ಮಕ್ಕಳನ್ನು ನೋಡಿ, “ಇವರು ಯಾರು?” ಎಂದು ಕೇಳಿದನು.</verse>
				<verse number="9">ಅದಕ್ಕೆ ಜೋಸೆಫನು, “ಈ ದೇಶದಲ್ಲಿ ದೇವರು ನನಗೆ ಅನುಗ್ರಹಿಸಿದ ಮಕ್ಕಳು,” ಎಂದನು. ಆಗ ತಂದೆ ಯಕೋಬನು, “ಇವರನ್ನು ನಾನು ಆಶೀರ್ವದಿಸುತ್ತೇನೆ; ನನ್ನ ಹತ್ತಿರಕ್ಕೆ ಕರೆದುಕೊಂಡು ಬಾ,” ಎಂದನು.</verse>
				<verse number="10">ವೃದ್ಧಾಪ್ಯದ ನಿಮಿತ್ತ ಯಕೋಬನ ಕಣ್ಣು ಮೊಬ್ಬಾಗಿತ್ತು. ಜೋಸೆಫನು ಆ ಮಕ್ಕಳನ್ನು ಹತ್ತಿರಕ್ಕೆ ತಂದಾಗ ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.</verse>
				<verse number="11">ಅನಂತರ ಜೋಸೆಫನಿಗೆ, “ನಿನ್ನ ಮುಖವನ್ನು ಮತ್ತೆ ನೋಡುವೆನೆಂದು ನಾನು ನೆನಸಿರಲಿಲ್ಲ. ಈಗ ನಿನ್ನನ್ನು ಮಾತ್ರವಲ್ಲ, ನಿನ್ನ ಮಕ್ಕಳನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾರೆ!” ಎಂದನು.</verse>
				<verse number="12">ಆಗ ಜೋಸೆಫನು ತಂದೆಯ ಮಡಲಿನಿಂದ ತನ್ನ ಮಕ್ಕಳನ್ನು ಎತ್ತಿಕೊಂಡು ತಂದೆಗೆ ನೆಲದ ತನಕ ಬಾಗಿ ನಮಸ್ಕರಿಸಿದನು.</verse>
				<verse number="13">ತರುವಾಯ ಜೋಸೆಫನು ಎಫ್ರಯಿಮನನ್ನು ತನ್ನ ಬಲಕ್ಕೆ ಯಕೋಬನ ಎಡಗೈಗೆದುರಾಗಿ ಮತ್ತು ಮನಸ್ಸೆಯನ್ನು ತನ್ನ ಎಡಕ್ಕೆ, ಯಕೋಬನ ಬಲಗೈಗೆದುರಾಗಿ, ತಂದೆಯ ಮುಂದೆ ನಿಲ್ಲಿಸಿದನು.</verse>
				<verse number="14">ಮನಸ್ಸೆಯು ಜೇಷ್ಠಮಗನಾಗಿದ್ದರೂ ಯಕೋಬನು ತನ್ನ ಕೈಗಳನ್ನು ಅಡ್ಡಡ್ಡವಾಗಿ ಚಾಚಿ ಕಿರಿಯವನಾದ ಎಫ್ರಯಿಮನ ತಲೆಯ ಮೇಲೆ ಬಲಗೈಯನ್ನು, ಮನಸ್ಸೆಯ ತಲೆಯ ಮೇಲೆ ಎಡಗೈಯನ್ನು ಇಟ್ಟು,</verse>
				<verse number="15">ಜೋಸೆಫನನ್ನು ಹೀಗೆಂದು ಆಶೀರ್ವದಿಸಿದನು: “ನನ್ನ ಪಿತೃಗಳಾದ ಅಬ್ರಹಾಮ್, ಇಸಾಕರು ಯಾವ ದೇವರ ಸಮ್ಮುಖದಲ್ಲಿ ನಡೆದುಕೊಂಡರೋ ಆ ದೇವರು, ಚಿಕ್ಕಂದಿನಿಂದ ಇಂದಿನವರೆಗೆ ನನ್ನನ್ನು ಪರಿಪಾಲಿಸಿಕೊಂಡು ಬಂದ ಆ ದೇವರು,</verse>
				<verse number="16">ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”</verse>
				<verse number="17">ತನ್ನ ತಂದೆ ಬಲಗೈಯನ್ನು ಎಫ್ರಯಿಮನ ತಲೆಯ ಮೇಲೆ ಇಟ್ಟದ್ದು ಜೋಸೆಫನಿಗೆ ಹಿಡಿಸಲಿಲ್ಲ. ಅವನು ಆ ಕೈಯನ್ನು ಹಿಡಿದು ಎಫ್ರಯಿಮನ ತಲೆಯಿಂದ ಎತ್ತಿ ಮನಸ್ಸೆಯ ತಲೆಯ ಮೇಲೆ ಇಡುವಂತೆ ತಂದೆಗೆ,</verse>
				<verse number="18">“ಹಾಗಲ್ಲ ಅಪ್ಪಾ, ಇವನೇ ಜೇಷ್ಠ ಪುತ್ರ; ಬಲಗೈಯನ್ನು ಇವನ ತಲೆಯ ಮೇಲೆ ಇಡು”, ಎಂದು ಹೇಳಿದ.</verse>
				<verse number="19">ಆದರೆ ತಂದೆ ಅದಕ್ಕೆ ಒಪ್ಪದೆ, “ಗೊತ್ತು ಮಗನೇ, ನನಗೆ ಗೊತ್ತು; ಇವನಿಂದಲೂ ಒಂದು ರಾಷ್ಟ್ರ ಉತ್ಪತ್ತಿಯಾಗುವುದು; ಇವನೂ ಬಲಿಷ್ಠನಾಗುವನು. ಅವನಿಂದ ರಾಷ್ಟ್ರಗಳ ಸಮೂಹವೆ ಉತ್ಪತ್ತಿಯಾಗುವುದು,” ಎಂದು ಹೇಳಿದನು.</verse>
				<verse number="20">ಆ ದಿನ ಅವರನ್ನು ಆಶೀರ್ವದಿಸುತ್ತಾ ಹೀಗೆಂದನು: \ಎಫ್ರಯಿಮ್ - ಮನಸ್ಸೆಯಂತೆ ನಿಮ್ಮನ್ನೂ ಅಭಿವೃದ್ಧಿಗೊಳಿಸಲಿ ದೇವರು! ಹೀಗೆ ನಿಮ್ಮ ಹೆಸರನ್ನು ಉಚ್ಚರಿಸುತ್ತಾ ಇತರರನ್ನು ಆಶೀರ್ವದಿಸುವರು ಇಸ್ರಯೇಲರು\. ಈ ರೀತಿಯಾಗಿ ಅವನು ಎಫ್ರಯಿಮನನ್ನು ಮನಸ್ಸೆಗಿಂತ ಮುಂದಿಟ್ಟನು.</verse>
				<verse number="21">ಬಳಿಕ ಯಕೋಬನು ಜೋಸೆಫನಿಗೆ, “ನನಗೆ ಮರಣ ಸಮೀಪಿಸಿದೆ; ಆದರೆ ದೇವರು ನಿಮ್ಮೊಂದಿಗಿದ್ದು ನಿಮ್ಮನ್ನು ಪಿತೃಗಳ ನಾಡಿಗೆ ಮರಳಿ ಬರಮಾಡುವರು.</verse>
				<verse number="22">ಇದಲ್ಲದೆ, ಕತ್ತಿ - ಬಿಲ್ಲುಗಳಿಂದ ನಾನು ಅಮೋರಿಯರ ವಶದಿಂದ ಪಡೆದ ಬೆಟ್ಟದ ತಪ್ಪಲನ್ನು, ನಿನ್ನ ಅಣ್ಣಂದಿರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ, ನಿನಗೆ ಕೊಟ್ಟಿದ್ದೇನೆ,” ಎಂದು ಹೇಳಿದನು.</verse>
			</chapter>
			<chapter number="49">
				<verse number="1">ಯಕೋಬನು ತನ್ನ ಮಕ್ಕಳನ್ನು ಕರೆಯಿಸಿ ಇಂತೆಂದನು: ಕೂಡಿಬನ್ನಿ ನೀವೆಲ್ಲರು, ನುಡಿವೆನು ನಿಮಗೆ ಮುಂದೆ ಸಂಭವಿಸುವುದನ್ನು;</verse>
				<verse number="2">ಯಕೋಬನ ಮಕ್ಕಳೇ, ಕೂಡಿಬಂದು ಕೇಳಿ ನೀವೆಲ್ಲರು ಆಲಿಸಿ ನಿಮ್ಮ ತಂದೆ ಇಸ್ರಯೇಲನ ಮಾತನ್ನು:</verse>
				<verse number="3">ರೂಬೇನನೇ, ನೀನೆನ್ನ ಜೇಷ್ಠಪುತ್ರನು ನನ್ನ ಚೈತನ್ಯಸ್ವರೂಪನು, ನನ್ನ ವೀರ್ಯದ ಪ್ರಥಮ ಫಲ ನೀನು ಹಿರಿಮೆಯಲು, ಒಲುಮೆಯಲು ಪ್ರಮುಖನೆನಿಸಿಕೊಳ್ಳುವವನು.</verse>
				<verse number="4">ಆದರೆ ದಡಮೀರಿದ ಪ್ರವಾಹ ನೀನು ಹತ್ತಿದೆ, ಹೊಲೆಮಾಡಿದೆ, ತಂದೆಯ ಹಾಸಿಗೆಯನು ಪ್ರಮುಖಸ್ಥಾನದಲ್ಲಿರೆ ನನ್ನ ಮಂಚವನ್ನೇರಿದೆ ನೀನು.</verse>
				<verse number="5">ಅಣ್ಣತಮ್ಮಂದಿರು ಸಿಮೆಯೋನ್ - ಲೇವಿಯರು ಅವರ ಕತ್ತಿಗಳು ಹಿಂಸಾತ್ಮಕ ಆಯುಧಗಳು.</verse>
				<verse number="6">ನನ್ನ ಮನವೇ, ಒಳಗಾಗಬೇಡ ಅವರ ದುರಾಲೋಚನೆಗೆ ನನ್ನ ಪ್ರಾಣವೇ, ಸೇರಬೇಡ ನೀನವರ ಗುಂಪಿಗೆ ಕೊಂದರವರು ನರರನು ಕೋಪೋದ್ರೇಕದಿಂದ ಊನಪಡಿಸಿದರು ಎತ್ತುಗಳನ್ನು ಮದದಿಂದ.</verse>
				<verse number="7">ಅವರ ಕೋಪ ಭೀಕರ, ಅದಕ್ಕಿರಲಿ ಧಿಕ್ಕಾರ! ಅವರ ರೌದ್ರ - ಕ್ರೂರ, ಅದಕ್ಕಿರಲಿ ಧಿಕ್ಕಾರ! ವಿಭಾಗಿಸುವೆನವರನು ಯಕೋಬ ಕುಲದಲಿ ಚದರಿಸುವೆನವರನು ಇಸ್ರಯೇಲರಲಿ.</verse>
				<verse number="8">ಯೆಹೂದನೇ, ವಂದಿಸುವರು ನಿನ್ನನು ಸಹೋದರರು ನಿನ್ನ ಕೈಯಲ್ಲಿರುವುದು ಶತ್ರುಗಳ ಕುತ್ತಿಗೆಯು ಎರಗುವರು ನಿನಗೆ ನಿನ್ನ ಅಣ್ಣತಮ್ಮಂದಿರು.</verse>
				<verse number="9">ನನ್ನ ಪುತ್ರ ಯೆಹೂದ, ನೀ ಪ್ರಾಯದ ಸಿಂಹದಂತೆ ಬೇಟೆಹಿಡಿದು ಬೆಟ್ಟ ಏರಿದ ಕಂಠೀರವನಂತೆ ಕಾಲು ಮಡಿಚಿ ಹೊಂಚು ಕೂತ ಕೇಸರಿಯಂತೆ ಈ ಸಿಂಹಿಣಿಯನ್ನು ಕೆಣಕುವ ಕೆಚ್ಚು ಯಾರಿಗಿದೆ?</verse>
				<verse number="10">ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.</verse>
				<verse number="11">ಕಟ್ಟುವನು ತನ್ನ ವಾಹನಪಶುವನು ದ್ರಾಕ್ಷಾಲತೆಗೆ ಬಿಗಿಯುವನು ತನ್ನ ಹೇಸರಕತ್ತೆಯನು ರಾಜದ್ರಾಕ್ಷೆಗೆ ಒಗೆಯುವನು ತನ್ನ ಬಟ್ಟೆಯನು ದ್ರಾಕ್ಷಾರಸದಲಿ ತೊಳೆವನು ಮೇಲಂಗಿಯನು ಆ ರಕ್ತಗೆಂಪು ರಸದಲಿ.</verse>
				<verse number="12">ಅವನ ಕಣ್ಣು ಕೆಂಪಾಗಿರುವುವು ದ್ರಾಕ್ಷಾರಸದ ಸಮೃದ್ಧಿಯಿಂದ ಅವನ ಹಲ್ಲು ಬೆಳ್ಳಗಿರುವುವು ಹಾಲಿನ ಸಮೃದ್ಧಿಯಿಂದ.</verse>
				<verse number="13">ಜೆಬುಲೂನನು ವಾಸಿಸುವನು ಸಮುದ್ರದ ಕರಾವಳಿಯಲ್ಲಿ ಹಡಗುಗಳು ಬಂದು ಹೋಗುವ ರೇವಂತೆ ಇರುವನಲ್ಲಿ ಸಿದೋನಿನ ತನಕ ಹರಡಿರುವುದು ಅವನ ಪ್ರಾಂತ್ಯದ ಗಡಿ.</verse>
				<verse number="14">ಇಸ್ಸಾಕಾರನು ಕುರಿಹಟ್ಟಿಗಳ ನಡುವೆ ಮಲಗಿರುವ ದೊಡ್ಡ ಕತ್ತೆ.</verse>
				<verse number="15">ಸೂಕ್ತವೆಂದುಕೊಂಡು ತನ್ನ ನಾಡು ವಿಶ್ರಾಂತಿಗೆ, ಸುಖಾನುಭವಕೆ ಬಗ್ಗಿಸುವನು ಬೆನ್ನನು ಹೊರೆ ಹೊರುವುದಕ್ಕೆ, ಬಿಟ್ಟಿಯ ಕೆಲಸಕ್ಕೆ.</verse>
				<verse number="16">ದಾನನು ತನ್ನ ಜನರನ್ನಾಳುವನು ಇಸ್ರಯೇಲಿನಿತರ ಕುಲಗಳಂತೆ.</verse>
				<verse number="17">ಇರುವನವನು ದಾರಿಯಲ್ಲಿರುವ ವಿಷಸರ್ಪದಂತೆ, ಕುದುರೆಯ ಹಿಮ್ಮಡಿಕಚ್ಚಿ ರಾಹುತನನು ಕೆಡವುವ ಹಾವಿನಂತೆ.</verse>
				<verse number="18">ಸರ್ವೇಶ್ವರಾ, ಎದುರುನೋಡುತ್ತಿರುವೆನು ನಿನ್ನಿಂದ ಬರುವಾ ಸಂರಕ್ಷಣೆಯನು.</verse>
				<verse number="19">ಗಾದನು ಗುರಿಯಾಗುವನು ಸುಲಿಗೆಗಾರರಾಕ್ರಮಣಕೆ ಓಡುವನಾ ದರೋಡೆಗಾರರನ್ನು ಹಿಮ್ಮೆಟ್ಟಿಕೊಂಡೇ.</verse>
				<verse number="20">ಆಶೇರನಗಿರುವುದು ಸಮೃದ್ಧಿಯಾಗಿ ಧಾನ್ಯ ದೊರಕುವುದವನಲಿ ರಾಜನಿಗೂ ತಕ್ಕ ಭಕ್ಷ್ಯ.</verse>
				<verse number="21">ನಫ್ತಾಲಿ ಸ್ವಚ್ಛಂದ ಜಿಂಕೆಮರಿಯಂತೆ ಸಿಗುವುದವನಲಿ ಸುಮಧುರವಾದ ಮಾತುಕತೆ.</verse>
				<verse number="22">ಜೋಸೆಫನು ಫಲಭರಿತ ವೃಕ್ಷದಂತೆ ಒರತೆ ಬಳಿಯಲೆ ಬೆಳೆದ ದ್ರಾಕ್ಷಿಯಂತೆ ಚಾಚಿದೆ ಅದರ ರೆಂಬೆ ಬೇಲಿಯಿಂದಾಚೆ.</verse>
				<verse number="23">ಬಿಲ್ಲುಗಾರರೆಸಗಿದರು ಅವನ ಮೇಲೆ ಆಕ್ರಮಣ ಸುತ್ತುವರೆದರವನನು ಎಸೆದು ಬಿರುಸುಬಾಣ.</verse>
				<verse number="24">ಆದರೂ ಯಕೋಬಕುಲದ ಸರ್ವ ಬಲಾಢ್ಯನ ಶಕ್ತಿಯಿಂದ ಇಸ್ರಯೇಲನ ಪೊರೆಬಂಡೆ - ಪರಿಪಾಲಕನ ನಾಮದಿಂದ ನಿಂತಿತು ಸ್ಥಿರವಾಗಿ ಅವನ ಬಿಲ್ಲು ಚುರುಕುಗೊಂಡಿತು ಅವನ ಕೈಗಳ ಬಲ್ಬು.</verse>
				<verse number="25">ಹೀಗಾಯಿತು ನಿನ್ನ ತ0ದೆಯ‍‍ ದೇವರಿ0ದ ಸಿಗಲಿ ನಿನಗಾತನ ಸಹಾಯ ಹೀಗಾಯಿತು ಸರ್ವವಲ್ಲಭ ದೇವರಿ0ದ. ದೊರಕಲಿ ನಿನಗಾತನ ಆಶೀರ್ವಾದ. ಮೇಲಣ ಆಕಾಶದಿ0ದ, ಕೆಳಗಣ ಸಾಗರ ಸೆಲೆಗಳಿ0ದ ಸ್ತನ್ಯದಿ0ದ, ಗರ್ಭದಿ0ದ, ಆತ ನೀಡುವ ವರದಾನ.</verse>
				<verse number="26">ಪ್ರಾಚೀನ ಪರ್ವತಗಳಿಗಿ0ತ, ಚಿರಸ್ಥಾಯಿ ಗುಡ್ಡಗಳಿಗಿಂತ ಉತ್ತಮೋತ್ತಮ ನಿನ್ನ ತಂದೆಯಿಂದ ಬರುವ ಆಶೀರ್ವಾದ. ಇಳಿದು ಬರಲೀ ವರದಾನಗಳು ಜೋಸೆಫನ ಮೇಲೆ ಸೋದರರಿಂದ ಬೇರ್ಪಟ್ಟವನ ಶಿರಸ್ಸಿನ ಮೇಲೆ.</verse>
				<verse number="27">ಕಿತ್ತು ತಿನ್ನುವ ತೋಳ ಬೆನ್ಯಾಮೀನನು ಬೆಳಿಗ್ಗೆ ತಿನ್ನುವನು ಹಿಡಿದುಕೊಂಡದುದನು ಸಂಜೆ ಹಂಚಿಕೊಳ್ಳುವನು ಕೊಳ್ಳೆಹೊಡೆದುದನು.</verse>
				<verse number="28">ಇವೇ ಇಸ್ರಯೇಲಿನ ಹನ್ನೆರಡು ಕುಲಗೋತ್ರಗಳು; ಇದೇ ಅವರ ತಂದೆ ಕೊಟ್ಟ ಆಶೀರ್ವಾದ: ಒಂದೊಂದು ಕುಲಕ್ಕೆ ಅವನು ನುಡಿದ ಒಂದೊಂದು ಆಶೀರ್ವಚನ.</verse>
				<verse number="29">ಯಕೋಬನು ತನ್ನ ಮಕ್ಕಳಿಗೆ ಕೊಟ್ಟ ಆಜ್ಞೆ ಇದು: “ನಾನು ನನ್ನ ದಿವಂಗತ ಪೂರ್ವಜರನ್ನು ಸೇರುವ ಕಾಲ ಸಮೀಪಿಸಿತು. ಹಿತ್ತಿಯನಾದ ಎಫ್ರೋನನ ಭೂಮಿಯಲ್ಲಿರುವ ಗವಿಯೊಳಗೆ, ಪಿತೃಗಳ ಬಳಿಯಲ್ಲಿ ನನ್ನನ್ನು ಸಮಾಧಿಮಾಡಬೇಕು.</verse>
				<verse number="30">ಆ ಗವಿ ಕಾನಾನ್ ನಾಡಿನ ಮಮ್ರೆಗೆದುರಾಗಿರುವ ಮಕ್ಪೇಲ ಎಂಬ ಬಯಲಿನಲ್ಲಿದೆ. ಅದನ್ನು ಅಬ್ರಹಾಮನು ಅದರ ಸುತ್ತಲಿರುವ ಭೂಮಿಸಹಿತ ಹಿತ್ತಿಯನಾದ ಎಫ್ರೋನನಿಂದ ಸ್ವಂತ ಸ್ಮಶಾನ ಭೂಮಿಗಾಗಿ ಕೊಂಡುಕೊಂಡನು.</verse>
				<verse number="31">ಅಲ್ಲೇ ಅಬ್ರಹಾಮನಿಗೂ ಅವನ ಪತ್ನಿ ಸಾರಳಿಗೂ ಸಮಾಧಿಯಾಯಿತು. ಅಲ್ಲೇ ಇಸಾಕನಿಗೂ ಅವನ ಮಡದಿ ರೆಬೆಕ್ಕಳಿಗೂ ಸಮಾಧಿ ಆಯಿತು. ಲೇಯಳನ್ನೂ ನಾನು ಅಲ್ಲಿ ಸಮಾಧಿಮಾಡಿದ್ದೇನೆ.</verse>
				<verse number="32">ಹೊಲದ ಸಮೇತ ಹಿತ್ತಿಯರಿಂದ ಕ್ರಯಕ್ಕೆ ಕೊಂಡುಕೊಂಡ ಆ ಗವಿಯೊಳಗೆ ನನಗೂ ಸಮಾಧಿಯಾಗಲಿ,” ಎಂದನು.</verse>
				<verse number="33">ಮಕ್ಕಳಿಗೆ ಈ ಆಜ್ಞೆಯನ್ನು ಕೊಟ್ಟು ಮುಗಿಸಿದ ನಂತರ ಯಕೋಬನು ಹಾಸಿಗೆಯಲ್ಲಿ ತನ್ನ ಕಾಲುಗಳನ್ನು ಮಡಚಿಕೊಂಡು ಪ್ರಾಣಬಿಟ್ಟು, ಮೃತರಾದ ಪಿತೃಗಳ ಬಳಿಗೆ ಸೇರಿದನು.</verse>
			</chapter>
			<chapter number="50">
				<verse number="1">ಆಗ ಜೋಸೆಫನು ತನ್ನ ತಂದೆಯ ಶವದ ಮೇಲೆ ಬಿದ್ದು, ಕಣ್ಣೀರು ಇಡುತ್ತಾ, ಅವರಿಗೆ ಮುದ್ದಿಟ್ಟನು.</verse>
				<verse number="2">ತರುವಾಯ ತನ್ನ ಸೇವಕರಲ್ಲಿ ಶವಲೇಪಕರಾದವರಿಗೆ, “ನನ್ನ ತಂದೆಯ ಶವವನ್ನು ಸುಗಂಧ ದ್ರವ್ಯಗಳಿಂದ ಲೇಪಿಸಿ ಸಿದ್ಧಪಡಿಸಿರಿ,” ಎಂದು ಅಪ್ಪಣೆಕೊಟ್ಟನು. ಅವರು ಹಾಗೆಯೇ ಮಾಡಿದರು.</verse>
				<verse number="3">ಪದ್ಧತಿಯ ಪ್ರಕಾರ ನಲವತ್ತು ದಿನಗಳು ಸುಗಂಧ ದ್ರವ್ಯಗಳನ್ನು ಲೇಪಿಸಬೇಕಾಗಿತ್ತು. ಅಷ್ಟು ದಿನಗಳವರೆಗೂ ಅವನಿಗೋಸ್ಕರ ಈಜಿಪ್ಟಿನವರಿಂದ ಶೋಕಾಚರಣೆ ಇತ್ತು.</verse>
				<verse number="4">ದುಃಖದ ದಿನಗಳು ಕಳೆದ ನಂತರ ಜೋಸೆಫನು ಫರೋಹನ ಪರಿವಾರದವರಿಗೆ, “ದಯವಿಟ್ಟು ನೀವು ಫರೋಹನ ಬಳಿಗೆ ಹೋಗಿ ಈ ವಿಷಯವನ್ನು ಮನಮುಟ್ಟುವಂತೆ ಮಾಡಿ:</verse>
				<verse number="5">ನನ್ನ ತಂದೆಯವರು ತಾವು ಕಾನಾನ್ ನಾಡಿನಲ್ಲಿ ಸಿದ್ಧಮಾಡಿಕೊಂಡಿರುವ ಸ್ಥಳದಲ್ಲಿಯೇ ತಮಗೆ ಸಮಾಧಿಮಾಡಬೇಕೆಂದು ಸಾಯುವುದಕ್ಕೆ ಮೊದಲೇ ನನ್ನಿಂದ ಪ್ರಮಾಣ ಮಾಡಿಸಿದರು. ಆದ್ದರಿಂದ ನಾನು ಹೋಗಿ ತಂದೆಯನ್ನು ಸಮಾಧಿಮಾಡಿ ಬರುವುದಕ್ಕೆ ಅಪ್ಪಣೆಯಾಗಬೇಕೆಂದು ವಿನಂತಿಸುತ್ತಿದ್ದೇನೆ,” ಎಂದನು.</verse>
				<verse number="6">ಫರೋಹನು ಈ ಸಂಗತಿಯನ್ನು ಕೇಳಿ ಜೋಸೆಫನಿಗೆ, “ನಿನ್ನ ತಂದೆ ಪ್ರಮಾಣ ಮಾಡಿಸಿದ ಮೇರೆಗೆ ನೀನು ಹೋಗಿ ಅವನಿಗೆ ಸಮಾಧಿಮಾಡಿ ಬರಬಹುದು,” ಎಂದು ಅಪ್ಪಣೆಕೊಟ್ಟನು.</verse>
				<verse number="7">ಜೋಸೆಫನು ತಂದೆಯನ್ನು ಸಮಾಧಿಮಾಡಲು ಹೊರಟುಹೋದಾಗ, ಅವನ ಜೊತೆಯಲ್ಲಿ ಫರೋಹನ ಪರಿವಾರದವರೆಲ್ಲರು, ಅರಮನೆಯ ಮುಖಂಡರು, ಈಜಿಪ್ಟಿನ ಮುಖ್ಯಸ್ಥರೆಲ್ಲರು,</verse>
				<verse number="8">ಜೋಸೆಫನ ಮನೆಯವರೆಲ್ಲರು, ಅಣ್ಣತಮ್ಮಂದಿರು, ತಂದೆಯ ಮನೆಯವರೆಲ್ಲರು ಹೋದರು. ತಮ್ಮ ಮಡದಿಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್ ಪ್ರಾಂತ್ಯದಲ್ಲಿ ಬಿಟ್ಟುಹೋದರು.</verse>
				<verse number="9">ಅವನ ಸಂಗಡ ರಥಗಳೂ ಕುದುರೆಸವಾರರೂ ಸಹ ಇದ್ದರು. ಹೀಗೆ ದೊಡ್ಡ ಜನಸಮೂಹವೇ ಅವನೊಂದಿಗೆ ಹೋಯಿತು.</verse>
				<verse number="10">ಅವರು ಜೋರ್ಡನ್ ನದಿಯಿಂದಾಚೆ ಇರುವ ಆಟಾದ್ ಎಂಬ ಕಣಕ್ಕೆ ಬಂದು ಅಲ್ಲಿ ಅತ್ಯಧಿಕವಾಗಿ ಗೋಳಾಡಿದರು; ಜೋಸೆಫನು ತನ್ನ ತಂದೆಗೋಸ್ಕರ ಏಳು ದಿನದ ಶೋಕಾಚರಣೆಯನ್ನು ಏರ್ಪಡಿಸಿದನು.</verse>
				<verse number="11">ಆ ನಾಡಿನ ಜನರಾದ ಕಾನಾನ್ಯರು ಆಟಾದ್ ಕಣದಲ್ಲಿ ನಡೆದ ಶೋಕಾಚರಣೆಯನ್ನು ನೋಡಿ, “ಈಜಿಪ್ಟಿನವರಿಗೆ ಒದಗಿ ಇರುವ ಈ ಶೋಕ ಬಹು ವಿಶೇಷವಾದುದು!” ಎಂದರು. ಈ ಕಾರಣ ಜೋರ್ಡನ್ ನದಿಯಾಚೆ ಇರುವ ಆ ಸ್ಥಳಕ್ಕೆ ‘ಆಬೇಲ್ ಮಿಚ್ರಯೀಮ್’ ಎಂದು ಹೆಸರಾಯಿತು.</verse>
				<verse number="12">ಯಕೋಬನ ಮಕ್ಕಳು ತಂದೆಯ ಅಪ್ಪಣೆಯಂತೆ</verse>
				<verse number="13">ಅವನ ಶವವನ್ನು ಕಾನಾನ್ ನಾಡಿಗೆ ಹೊತ್ತುಕೊಂಡು ಹೋಗಿ ಮಕ್ಪೇಲ ಎಂಬ ಬಯಲಿನಲ್ಲಿರುವ ಗವಿಯೊಳಗೆ ಸಮಾಧಿಮಾಡಿದರು. ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಮಮ್ರೆಗೆದುರಿನಲ್ಲಿರುವ ಆ ಗವಿಯನ್ನು ಸುತ್ತಲು ಇರುವ ಭೂಮಿ ಸಮೇತ, ಸ್ವಂತ ಸ್ಮಶಾನಭೂಮಿಗಾಗಿ ಕೊಂಡುಕೊಂಡಿದ್ದನು.</verse>
				<verse number="14">ತಂದೆಯನ್ನು ಸಮಾಧಿಮಾಡಿದ ಮೇಲೆ ಜೋಸೆಫನೂ ಅವನ ಅಣ್ಣತಮ್ಮಂದಿರೂ ಆ ಶವಸಂಸ್ಕಾರಕ್ಕಾಗಿ ಅವನ ಜೊತೆಯಲ್ಲಿ ಹೋಗಿದ್ದ ಎಲ್ಲರೂ ಈಜಿಪ್ಟಿಗೆ ಹಿಂದಿರುಗಿದರು.</verse>
				<verse number="15">ತಂದೆ ಸತ್ತ ಬಳಿಕ ಜೋಸೆಫನ ಅಣ್ಣತಮ್ಮಂದಿರು, “ಜೋಸೆಫನು ಬಹುಶಃ ನಮ್ಮನ್ನು ದ್ವೇಷಿಸಿಯಾನು! ನಾವು ಅವನಿಗೆ ಮಾಡಿದ ಎಲ್ಲ ಹಾನಿಗೆ ಪ್ರತಿಯಾಗಿ ಶಿಕ್ಷಿಸಿಯಾನು,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.</verse>
				<verse number="16">ಆದುದರಿಂದ ಜೋಸೆಫನಿಗೆ ಹೀಗೆಂದು ಹೇಳಿಕಳಿಸಿದರು: “ನಿನ್ನ ತಂದೆ ಸಾಯುವುದಕ್ಕೆ ಮುಂಚೆ ನಮಗೆ ಅಪ್ಪಣೆಮಾಡಿದ್ದೇನೆಂದರೆ -</verse>
				<verse number="17">‘ನೀವು ಜೋಸೆಫನಿಗೆ - ನಿನ್ನ ಅಣ್ಣಂದಿರಾದ ನಾವು ನಿನಗೆ ಹಾನಿಮಾಡಿದ್ದೇನೋ ನಿಜ; ಆದರೂ ನಮ್ಮ ಅಪರಾಧವನ್ನು, ಪಾಪವನ್ನು ಕ್ಷಮಿಸು - ಎಂದು ಕೇಳಿಕೊಳ್ಳಬೇಕು, ಅವರು ಹೀಗೆ ವಿಧಿಸಿದ್ದರಿಂದ ನಾವು ಮಾಡಿದ ಅಪರಾಧವನ್ನು ಈಗ ನೀನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತಿದ್ದೇವೆ.” ಈ ಮಾತುಗಳನ್ನು ಕೇಳಿ ಜೋಸೆಫನು ಕಣ್ಣೀರು ಸುರಿಸಿದನು.</verse>
				<verse number="18">ಇದೂ ಅಲ್ಲದೆ, ಅಣ್ಣಂದಿರು ತಾವೇ ಬಂದು ಅವನಿಗೆ ಅಡ್ಡಬಿದ್ದರು. “ಇಗೋ, ನಾವು ನಿನಗೆ ಗುಲಾಮರು,” ಎಂದು ಹೇಳಿದರು.</verse>
				<verse number="19">ಆದರೆ ಜೋಸೆಪನು ಅವರಿಗೆ, “ಹೆದರಬೇಡಿ; ನಾನು ದೇವರ ಸ್ಥಾನದಲ್ಲಿ ಇಲ್ಲ;</verse>
				<verse number="20">ನೀವೇನೋ ನನಗೆ ಹಾನಿಮಾಡಬೇಕೆಂದು ಎಣಿಸಿದರು. ಆದರೆ ದೇವರು ಒಳಿತಾಗಬೇಕೆಂದು ಸಂಕಲ್ಪಿಸಿದರು; ಇದರಿಂದ ಅನೇಕ ಜನರ ಪ್ರಾಣ ಉಳಿಯುವಂತೆ ಮಾಡಿದರು. ಇಂದಿಗೂ ಈ ಕಾರ್ಯ ನಡೆಯುತ್ತಿದೆ.</verse>
				<verse number="21">ಆದುದರಿಂದ ನೀವು ಸ್ವಲ್ಪವೂ ಸಂಕೋಚಪಡಬೇಕಾಗಿಲ್ಲ. ನಾನು ನಿಮ್ಮನ್ನೂ ನಿಮಗೆ ಸೇರಿದ ಎಲ್ಲರನ್ನೂ ಪೋಷಿಸುತ್ತೇನೆ,” ಎಂದು ಹೇಳಿ ಅವರನ್ನು ಸಂತೈಸಿ, ಅವರ ಸಂಗಡ ಪ್ರೀತಿಯಿಂದ ಮಾತಾಡಿದನು.</verse>
				<verse number="22">ಜೋಸೆಫನೂ ಅವನ ತಂದೆಯ ಕುಟುಂಬದವರೂ ಈಜಿಪ್ಟಿನಲ್ಲಿ ವಾಸಮಾಡುತ್ತಾ ಬಂದರು. ಜೋಸೆಫನು ನೂರಹತ್ತು ವರ್ಷ ಬದುಕಿದ್ದನು;</verse>
				<verse number="23">ಎಫ್ರಯಿಮನ ಮಕ್ಕಳ ಮೊಮ್ಮಕ್ಕಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಜೋಸೆಫನು ಅವರನ್ನೂ ತನ್ನ ಮಡಲಿಗೆ ಬರಮಾಡಿಕೊಂಡನು.</verse>
				<verse number="24">ಜೋಸೆಫನು ತನ್ನ ಅಣ್ಣತಮ್ಮಂದಿರಿಗೆ, “ನನ್ನ ಮರಣಕಾಲವು ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಕಾಪಾಡಲು ಬರುವರು; ತಾವು ಅಬ್ರಹಾಮ್, ಇಸಾಕ್, ಯಕೋಬರಿಗೆ ಕೊಡುವುದಾಗಿ ವಾಗ್ದಾನಮಾಡಿರುವ ನಾಡಿಗೆ ನೀವು ಹೋಗಿ ಸೇರುವಂತೆ ಮಾಡುವರು,” ಎಂದು ಹೇಳಿದನು.</verse>
				<verse number="25">ಇದೂ ಅಲ್ಲದೆ ಜೋಸೆಫನು ಆ ಇಸ್ರಯೇಲನ ಮಕ್ಕಳಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಕಾಪಾಡಲು ಬರುವರು; ಆಗ ನೀವು ನನ್ನ ಶವವನ್ನು ನಿಮ್ಮ ಸಂಗಡ ಹೊತ್ತುಕೊಂಡು ಹೋಗಬೇಕು,” ಎಂದು ಹೇಳಿ, “ಹಾಗೆಯೇ ಮಾಡುತ್ತೇನೆ,” ಎಂಬುದಾಗಿ ಅವರಿಂದ ಪ್ರಮಾಣ ಮಾಡಿಸಿದನು.</verse>
				<verse number="26">ಜೋಸೆಫನು ಈಜಿಪ್ಟ್ ದೇಶದಲ್ಲಿ ತನ್ನ ನೂರಹತ್ತನೇ ವರ್ಷದಲ್ಲಿ ಸತ್ತನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ಲೇಪಿಸಿ, ಅದನ್ನು ಒಂದು ಪೆಟ್ಟಿಗೆಯಲ್ಲಿ ಇರಿಸಿದರು.</verse>
			</chapter>
		</book>
		<book number="2">
			<chapter number="1">
				<verse number="1">ಯಕೋಬನೊಡನೆ ಹಾಗು ತಮ್ಮ ತಮ್ಮ ಕುಟುಂಬಗಳೊಡನೆ ಈಜಿಪ್ಟ್ ದೇಶಕ್ಕೆ ಬಂದ ಇಸ್ರಯೇಲನ ಮಕ್ಕಳ ಹೆಸರುಗಳು ಇವು:</verse>
				<verse number="2">ರೂಬೇನ್, ಸಿಮೆಯೋನ್, ಲೇವಿ, ಯೆಹೂದ,</verse>
				<verse number="3">ಇಸ್ಸಾಕಾರ್, ಜೆಬುಲೂನ್, ಬೆನ್ಯಾಮೀನ್,</verse>
				<verse number="4">ದಾನ್, ನಫ್ತಾಲಿ, ಗಾದ್ ಮತ್ತು ಆಶೇರ್.</verse>
				<verse number="5">ಯಕೋಬನ ಸಂತತಿಯವರೆಲ್ಲರು ಎಪ್ಪತ್ತು ಮಂದಿ. ಜೋಸೆಫನು ಈಗಾಗಲೇ ಈಜಿಪ್ಟಿನಲ್ಲಿ ಇದ್ದನು.</verse>
				<verse number="6">ಕಾಲಕ್ರಮೇಣ ಜೋಸೆಫನು, ಅವನ ಅಣ್ಣತಮ್ಮಂದಿರು ಹಾಗು ಆ ತಲೆಮಾರಿನ ಎಲ್ಲರು ತೀರಿಹೋದರು.</verse>
				<verse number="7">ಆದರೂ ಇಸ್ರಯೇಲನ ವಂಶವು ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಯಿತು. ಅವರು ಶಕ್ತಿಶಾಲಿಗಳಾದರು. ಆ ದೇಶದಲ್ಲೆಲ್ಲಾ ತುಂಬಿಕೊಂಡರು.</verse>
				<verse number="8">ಅನಂತರ ಹೊಸ ರಾಜನೊಬ್ಬನು ಈಜಿಪ್ಟ್ ದೇಶದ ಆಳ್ವಿಕೆಗೆ ಬಂದನು. ಅವನಿಗೆ ಜೋಸೆಫನ ವಿಷಯ ತಿಳಿದಿರಲಿಲ್ಲ.</verse>
				<verse number="9">ಅವನು ತನ್ನ ಜನರಿಗೆ, “ಇಸ್ರಯೇಲರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ, ಬಲಾಢ್ಯರಾಗಿದ್ದಾರೆ, ಅಧೀನದಲ್ಲಿರಿಸಲು ಕಷ್ಟಸಾಧ್ಯ.</verse>
				<verse number="10">ಯುದ್ಧವೇನಾದರು ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಕೂಡಿಕೊಂಡು ನಮಗೆ ವಿರೋಧವಾಗಿ ಕಾದಾಡಿ ನಾಡನ್ನು ಬಿಟ್ಟು ಪಲಾಯನ ಗೈಯಬಹುದು. ಆದ್ದರಿಂದ ಅವರು ವೃದ್ಧಿಯಾಗದಂತೆ ನಾವು ಉಪಾಯ ಹೂಡಬೇಕು,” ಎಂದು ಎಚ್ಚರಿಸಿದನು.</verse>
				<verse number="11">ಅದರಂತೆಯೇ ಅವನ ಜನರು ಇಸ್ರಯೇಲರಿಗೆ ಕಿರುಕುಳ ಕೊಡಲು ತೊಡಗಿದರು. ಪುಕ್ಕಟೆಯಾಗಿ ಕೆಲಸಮಾಡಿಸಿಕೊಂಡರು. ಬಿಟ್ಟೀ ಕೆಲಸ ಮಾಡಿಸುವ ಅಧಿಕಾರಿಗಳನ್ನು ನೇಮಿಸಿ ಫರೋಹನಿಗೆ ‘ಪಿತೋಮ್’ ಮತ್ತು ‘ರಾಮ್ಸೇಸ್’ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು.</verse>
				<verse number="12">ಈಜಿಪ್ಟರು ಅವರಿಗೆ ಎಷ್ಟು ಕಿರುಕುಳ ಕೊಡುತ್ತಿದ್ದರೋ ಅಷ್ಟೂ ಹೆಚ್ಚಿ ಹರಡಿಕೊಳ್ಳುತ್ತಿದ್ದರು.</verse>
				<verse number="13">ಆದ್ದರಿಂದ ಇಸ್ರಯೇಲರ ಬಗ್ಗೆ ಈಜಿಪ್ಟರು ಸಹಿಸಲಾರದಷ್ಟು ಹೆದರಿಕೆ ಉಳ್ಳವರಾದರು. ಇಸ್ರಯೇಲರಿಂದ ಕ್ರೂರತನದಿಂದ ಸೇವೆಮಾಡಿಸಿಕೊಂಡರು.</verse>
				<verse number="14">ಮಣ್ಣು ಅಗೆಯುವ ಕೆಲಸದಲ್ಲೂ ಇಟ್ಟಿಗೆ ಸುಡುವ ಕೆಲಸದಲ್ಲೂ ವ್ಯವಸಾಯದ ಮತ್ತಿತರ ಕೆಲಸಕಾರ್ಯಗಳಲ್ಲೂ ಕಠಿಣವಾಗಿ ಅವರಿಂದ ದುಡಿಸಿಕೊಂಡರು. ಅವರು ಮಾಡಿಸಿಕೊಳ್ಳುತ್ತಿದ್ದ ಪ್ರತಿಯೊಂದು ಕೆಲಸವು ಜೀವನವೇ ಬೇಡವೆನ್ನುವಷ್ಟು ಕಠೋರವಾಗಿ ಇರುತ್ತಿತ್ತು.</verse>
				<verse number="15">ಇದೂ ಸಾಲದೆಂದು ಈಜಿಪ್ಟಿನ ಅರಸನು ಶಿಪ್ರಾ ಮತ್ತು ಪೂಗಾ ಎಂಬ ಹಿಬ್ರಿಯ ಸೂಲಗಿತ್ತಿಯರಿಗೆ,</verse>
				<verse number="16">“ನೀವು ಹಿಬ್ರಿಯ ಮಹಿಳೆಯರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವ ಮಗು ಗಂಡಾಗಿದ್ದರೆ ಕೊಲ್ಲಬೇಕು, ಹೆಣ್ಣಾಗಿದ್ದರೆ ಉಳಿಸಬೇಕು,” ಎಂದು ಹೇಳಿದ್ದನು.</verse>
				<verse number="17">ಆದರೆ ಆ ಸೂಲಗಿತ್ತಿಯರು ದೈವಭಕ್ತರು. ಈಜಿಪ್ಟಿನ ಅರಸ ಹೇಳಿದಂತೆ ಮಾಡದೆ ಗಂಡುಮಕ್ಕಳನ್ನು ಉಳಿಸಿದರು.</verse>
				<verse number="18">ಆಗ ಆ ಅರಸನು ಅವರನ್ನು ಕರೆಯಿಸಿ, “ನೀವು ಗಂಡುಮಕ್ಕಳನ್ನು ಉಳಿಸಿದ್ದು ಏಕೆ? ಎಂದು ವಿಚಾರಿಸಿದನು.</verse>
				<verse number="19">ಆ ಫರೋಹನಿಗೆ ಸೂಲಗಿತ್ತಿಯರು, “ಹಿಬ್ರಿಯ ಮಹಿಳೆಯರು ಈಜಿಪ್ಟಿನ ಮಹಿಳೆಯರಂತಲ್ಲ; ಏಕೆಂದರೆ ಅವರು ಗಟ್ಟಿಮುಟ್ಟಾದವರು. ಸೂಲಗಿತ್ತಿಯರು ಹತ್ತಿರ ಬರುವುದಕ್ಕೆ ಮುಂಚೆಯೇ ಹೆರುತ್ತಾರೆ,” ಎಂದು ಹೇಳಿದರು.</verse>
				<verse number="20">ದೇವರು ಆ ಸೂಲಗಿತ್ತಿಯರಿಗೆ ಒಳ್ಳೆಯದನ್ನೆ ಮಾಡಿದರು. ಅವರಲ್ಲಿ ದೈವಭಕ್ತಿ ಇದ್ದುದರಿಂದ ಅವರಿಗೆ ವಂಶಾಭಿವೃದ್ಧಿಯನ್ನು ಉಂಟುಮಾಡಿದರು. ಇತ್ತ ಇಸ್ರಯೇಲರು ಸಂಖ್ಯೆಯಲ್ಲೂ ಶಕ್ತಿಯಲ್ಲೂ ಪ್ರವರ್ಧಿಸಿದರು.</verse>
				<verse number="21"></verse>
				<verse number="22">ಕಟ್ಟಕಡೆಗೆ ಫರೋಹನು ತನ್ನ ಜನರಿಗೆಲ್ಲಾ, \ಹಿಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು; ಹೆಣ್ಣು ಕೂಸುಗಳನ್ನೆಲ್ಲಾ ಉಳಿಸಬೇಕು,” ಎಂದು ಆಜ್ಞೆಮಾಡಿದನು.</verse>
			</chapter>
			<chapter number="2">
				<verse number="1">ಲೇವಿಯ ವಂಶಸ್ಥನಾದ ಒಬ್ಬನು ಲೇವಿಯ ಕುಲದ ಕನ್ಯೆಯನ್ನು ಮದುವೆಯಾದನು.</verse>
				<verse number="2">ಆಕೆ ಗರ್ಭಿಣಿಯಾಗಿ ಒಂದು ಗಂಡುಮಗುವನ್ನು ಹೆತ್ತಳು. ಅದು ಅತಿ ಚೆಲುವಾದ ಕೂಸೆಂದು ತಿಳಿದು ಮೂರು ತಿಂಗಳು ಬಚ್ಚಿಟ್ಟಳು.</verse>
				<verse number="3">ಆದರೆ ಹೆಚ್ಚು ಕಾಲ ಮರೆಮಾಡಲಾಗಲಿಲ್ಲ. ಎಂತಲೆ ಆಕೆ ಆಪಿನ ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು, ಜೇಡಿ ಮಣ್ಣನ್ನೂ ರಾಳವನ್ನೂ ಅದಕ್ಕೆ ಮೆತ್ತಿ, ಮಗುವನ್ನು ಅದರಲ್ಲಿ ಮಲಗಿಸಿ, ನೈಲ್ ನದಿಯ ಅಂಚಿನಲ್ಲಿದ್ದ ಜಂಬು ಹುಲ್ಲಿನ ನಡುವೆ ಇಟ್ಟಳು.</verse>
				<verse number="4">ಮಗುವಿಗೆ ಏನಾಗುವುದೋ ಎಂದು ತಿಳಿದುಕೊಳ್ಳುವುದಕ್ಕಾಗಿ ಆ ಮಗುವಿನ ಅಕ್ಕ ಸ್ವಲ್ಪ ದೂರದಲ್ಲಿ ನಿಂತುಕೊಂಡಳು.</verse>
				<verse number="5">ಅಷ್ಟರಲ್ಲಿ ಫರೋಹನ ಪುತ್ರಿ ಸ್ನಾನಕ್ಕಾಗಿ ಆ ನದಿಯ ಬಳಿಗೆ ಇಳಿದು ಬಂದಳು. ಆಕೆಯ ಗೆಳತಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಜಂಬುಹುಲ್ಲಿನ ನಡುವೆ ಪೆಟ್ಟಿಗೆಯೊಂದನ್ನು ಕಂಡಳು. ದಾಸಿಯೊಬ್ಬಳನ್ನು ಕಳಿಸಿ ಅದನ್ನು ತರಿಸಿದಳು.</verse>
				<verse number="6">ಪೆಟ್ಟಿಗೆಯನ್ನು ತೆರೆದು ನೋಡುವಾಗ ಏನಾಶ್ಚರ್ಯ! ಅದರಲ್ಲಿ ಅಳುವ ಕೂಸು! ಆಕೆಗೆ ಅದರ ಮೇಲೆ ಕನಿಕರ ಹುಟ್ಟಿತು. “ಇದು ಹಿಬ್ರಿಯರ ಮಕ್ಕಳಲ್ಲಿ ಒಂದಾಗಿರಬೇಕು,” ಎಂದುಕೊಂಡಳು.</verse>
				<verse number="7">ಆ ಮಗುವಿನ ಅಕ್ಕ ಬಂದು, “ನಿಮ್ಮ ಪರವಾಗಿ ಈ ಕೂಸನ್ನು ಮೊಲೆಕೊಟ್ಟು ಸಾಕಲು ಹಿಬ್ರಿಯ ಮಹಿಳೆಯರಲ್ಲಿ ಒಬ್ಬ ದಾದಿಯನ್ನು ನಾನು ಕರೆದುಕೊಂಡು ಬರಬಹುದೇ?” ಎಂದು ಫರೋಹನ ಪುತ್ರಿಯನ್ನು ವಿಚಾರಿಸಿದಳು.</verse>
				<verse number="8">“ಹೌದು, ಹಾಗೆಯೆ ಮಾಡು,” ಎಂದಳು ಫರೋಹನ ಪುತ್ರಿ. ಆ ಹುಡುಗಿ ಹೋಗಿ ಕೂಸಿನ ತಾಯಿಯನ್ನೇ ಕರೆದು ತಂದಳು.</verse>
				<verse number="9">ಅವಳಿಗೆ ಆ ರಾಜಪುತ್ರಿ, “ನೀನು ಈ ಮಗುವನ್ನು ತೆಗೆದುಕೊಂಡು ಹೋಗಿ ನನ್ನ ಪರವಾಗಿ ಸಾಕು. ನಾನೇ ನಿನಗೆ ಸಂಬಳವನ್ನು ಕೊಡುತ್ತೇನೆ,” ಎಂದಳು. ಅಂತೆಯೇ ಆ ಮಹಿಳೆ ಕೂಸನ್ನು ತೆಗೆದುಕೊಂಡು ಹೋಗಿ ಸಾಕಿದಳು.</verse>
				<verse number="10">ಆ ಹುಡುಗನು ಬೆಳೆದಾಗ ಅವನನ್ನು ಫರೋಹನ ಪುತ್ರಿಯ ಬಳಿಗೆ ಕರೆದುಕೊಂಡು ಬಂದಳು. ಅವನು ಆಕೆಗೆ ಮಗನಾದನು. “ನೀರಿನಿಂದ ನಾನು ಇವನನ್ನು ಎತ್ತಿದೆ” ಎಂದು ಹೇಳಿ ಆಕೆ ಅವನಿಗೆ “ಮೋಶೆ\ ಎಂದು ಹೆಸರಿಟ್ಟಳು.</verse>
				<verse number="11">ಮೋಶೆ ದೊಡ್ಡವನಾದ ಮೇಲೆ ಸ್ವಜನರಾದ ಹಿಬ್ರಿಯರ ಬಳಿಗೆ ಹೋಗಿ ಅವರು ಮಾಡುತ್ತಿದ್ದ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು.</verse>
				<verse number="12">ಒಮ್ಮೆ ಒಬ್ಬ ಈಜಿಪ್ಟಿನವನು ತನ್ನ ದೇಶೀಯನಾದ ಹಿಬ್ರಿಯನನ್ನು ಹೊಡೆಯುವುದನ್ನು ಕಂಡನು. ಅತ್ತಿತ್ತ ನೋಡಿ, ಯಾರೂ ಇಲ್ಲ ಎಂದು ತಿಳಿದು, ಆ ಈಜಿಪ್ಟನನ್ನು ಹೊಡೆದು ಹಾಕಿ ಅವನ ಶವವನ್ನು ಮರಳಿನಲ್ಲಿ ಮುಚ್ಚಿಬಿಟ್ಟನು.</verse>
				<verse number="13">ಮಾರನೆಯ ದಿನ ಕೂಡ ಮೋಶೆ ಹೊರಗೆ ಹೋಗಿ ನೋಡಿದನು. ಈ ಸಾರಿ ಇಬ್ಬರು ಹಿಬ್ರಿಯರೇ ಜಗಳವಾಡುತ್ತಿದ್ದರು. ತಪ್ಪಿತಸ್ಥನಿಗೆ, “ಏನಯ್ಯಾ ಸ್ವಕುಲದವನನ್ನೇ ಹೊಡೆಯುತ್ತಿರುವೆ ಏಕೆ?” ಎಂದು ಕೇಳಿದನು.</verse>
				<verse number="14">ಅದಕ್ಕೆ ಅವನು, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿ ಹಾಗೂ ನ್ಯಾಯಾಧಿಪತಿಯನ್ನಾಗಿ ನೇಮಿಸಿದವರು ಯಾರು? ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನು ಕೊಂದುಹಾಕಬೇಕೆಂದಿರುವೆಯಾ?” ಎಂದನು. ಈ ಮಾತನ್ನು ಕೇಳಿದ್ದೇ ಮೋಶೆ, “ನಾನು ಮಾಡಿದ ಕಾರ್ಯ ಬಯಲಾಗಿಬಿಟ್ಟಿತಲ್ಲಾ!” ಎಂದು ಅಂಜಿದನು.</verse>
				<verse number="15">ನಡೆದ ಸಂಗತಿ ಫರೋಹನಿಗೆ ಮುಟ್ಟಿತು. ಅವನು ಮೋಶೆಯನ್ನು ಕೊಲ್ಲಿಸಬೇಕೆಂದು ಆಲೋಚಿಸುತ್ತಿದ್ದನು. ಆದುದರಿಂದ ಮೋಶೆ ಫರೋಹನ ಬಳಿಯಿಂದ ಪಲಾಯನಗೈದು ಮಿದ್ಯಾನ್ ನಾಡನ್ನು ಸೇರಿದನು.</verse>
				<verse number="16">ಒಂದು ದಿನ ಮೋಶೆ ಆ ನಾಡಿನ ಬಾವಿಯೊಂದರ ಬಳಿ ಕುಳಿತಿದ್ದನು. ಮಿದ್ಯಾನರ ಪೂಜಾರಿಯ ಏಳು ಮಂದಿ ಹೆಣ್ಣು ಮಕ್ಕಳು ಅಲ್ಲಿಗೆ ಬಂದರು. ತಮ್ಮ ತಂದೆಯ ಕುರಿಗಳಿಗೆ ನೀರು ಕುಡಿಸುವುದಕ್ಕಾಗಿ ನೀರು ಸೇದಿ ತೊಟ್ಟಿಗಳಲ್ಲಿ ತುಂಬುತ್ತಿದ್ದರು.</verse>
				<verse number="17">ಕುರುಬರು ಬಂದು ಅವರನ್ನು ಬಾವಿಯ ಬಳಿಯಿಂದ ಓಡಿಸಲೆತ್ನಿಸಿದರು. ಮೋಶೆ ಆ ಹುಡುಗಿಯರಿಗೆ ಸಹಾಯವಾಗಿ ಬಂದು ಅವರ ಕುರಿಗಳಿಗೆ ನೀರನ್ನು ಕುಡಿಸಿದನು.</verse>
				<verse number="18">ಹುಡುಗಿಯರು ತಮ್ಮ ತಂದೆ ರೆಗೂವೇಲನ ಬಳಿಗೆ ಹಿಂದಿರುಗಿದಾಗ ಅವನು, “ಈ ಹೊತ್ತು ಬಲುಬೇಗ ಬಂದು ಇದ್ದೀರಿ, ಏನು ಕಾರಣ?” ಎಂದು ವಿಚಾರಿಸಿದನು.</verse>
				<verse number="19">ಅವರು, “ಈಜಿಪ್ಟಿನವನಾದ ಒಬ್ಬ ಮನುಷ್ಯ ನಮ್ಮನ್ನು ಕುರುಬರ ಕಾಟದಿಂದ ತಪ್ಪಿಸಿದ; ಅದು ಮಾತ್ರವಲ್ಲ, ಅವನು ನಮಗಾಗಿ ನೀರು ಸೇದಿ ಕುರಿಗಳಿಗೆ ಕುಡಿಸಿದ,” ಎಂದು ವಿವರಿಸಿದರು.</verse>
				<verse number="20">ಅವರ ತಂದೆ, “ಆ ಮನುಷ್ಯನೆಲ್ಲಿ? ಅವನನ್ನು ಏಕೆ ಬಿಟ್ಟುಬಂದಿರಿ? ಹೋಗಿ ಅವನನ್ನು ಊಟಕ್ಕೆ ಕರೆದುಕೊಂಡುಹೋಗಿ ತನ್ನಿ,” ಎಂದು ಹೇಳಿದನು.</verse>
				<verse number="21">ಮೋಶೆ ಆ ಮನುಷ್ಯನ ಸಂಗಡ ವಾಸಮಾಡಲು ಒಪ್ಪಿಕೊಂಡನು. ಅವನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆಮಾಡಿಕೊಟ್ಟನು.</verse>
				<verse number="22">ಆಕೆ ಒಂದು ಗಂಡು ಮಗುವನ್ನು ಹೆತ್ತಳು. ಮೋಶೆ, “ನಾನು ಅನ್ಯದೇಶದಲ್ಲಿ ಒಬ್ಬ ಪ್ರವಾಸಿ,” ಎಂದು ಹೇಳಿ ಆ ಮಗುವಿಗೆ ‘ಗೇರ್ಷೋಮ್’ ಎಂದು ಹೆಸರಿಟ್ಟನು.</verse>
				<verse number="23">ಹೀಗೆ ಬಹಳ ದಿನಗಳು ಕಳೆದ ಮೇಲೆ ಈಜಿಪ್ಟ್ ದೇಶದ ಅರಸನು ಕಾಲವಾದನು. ಇಸ್ರಯೇಲರು ತಾವು ಮಾಡಬೇಕಾಗಿದ್ದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಿದ್ದರು. ಆ ಗೋಳು ದೇವರಿಗೆ ಮುಟ್ಟಿತು.</verse>
				<verse number="24">ದೇವರು ಆ ಜನರ ನರಳಾಟವನ್ನು ಕೇಳಿ ತಾವು ಅಬ್ರಹಾಮ, ಇಸಾಕ, ಯಕೋಬರಿಗೆ ಮಾಡಿದ್ದ ವಾಗ್ದಾನವನ್ನು ನೆನಪಿಗೆ ತಂದುಕೊಂಡರು.</verse>
				<verse number="25">ಇಸ್ರಯೇಲರನ್ನು ನೋಡಿ ಅವರಲ್ಲಿ ಕನಿಕರಗೊಂಡರು.</verse>
			</chapter>
			<chapter number="3">
				<verse number="1">ಮೋಶೆ ಮಿದ್ಯಾನರ ಪೂಜಾರಿಯೂ ತನ್ನ ಮಾವನೂ ಆದ ಇತ್ರೋನನ ಮಂದೆಯನ್ನು ಮೇಯಿಸುತ್ತಿದ್ದನು. ಒಮ್ಮೆ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡೆಸಿಕೊಂಡು ‘ಹೋರೇಬ್’ ಎಂಬ ದೇವರ ಬೆಟ್ಟಕ್ಕೆ ಬಂದನು.</verse>
				<verse number="2">ಅಲ್ಲಿ ಮುಳ್ಳಿನ ಪೊದೆಯೊಂದರ ಒಳಗೆ ಉರಿಯುವ ಬೆಂಕಿಯಲ್ಲಿ ಸರ್ವೇಶ್ವರನ ದೂತನು ಅವನಿಗೆ ಕಾಣಿಸಿಕೊಂಡನು. ಮೋಶೆ ನೋಡಿದನು. ಆ ಮುಳ್ಳಿನ ಪೊದೆ ಉರಿಯುತ್ತಲೇ ಇತ್ತು; ಆದರೆ ಸುಟ್ಟುಹೋಗದೆ ಇತ್ತು.</verse>
				<verse number="3">ಆಗ ಮೋಶೆ, “ಇದೇನು ಆಶ್ಚರ್ಯ! ಪೊದೆ ಸುಟ್ಟುಹೋಗದೆ ಇರುವುದಕ್ಕೆ ಕಾರಣವೇನು? ನಾನು ಹತ್ತಿರ ಹೋಗಿ ತಿಳಿದುಕೊಳ್ಳುತ್ತೇನೆ,” ಎಂದುಕೊಂಡನು.</verse>
				<verse number="4">ಅದನ್ನು ನೋಡಲು ಅವನು ಮುಂದಕ್ಕೆ ಬರುವುದನ್ನು, ಸರ್ವೇಶ್ವರ ಸ್ವಾಮಿ ಕಂಡರು. ಪೊದೆಯೊಳಗಿಂದ, “ಮೋಶೇ, ಮೋಶೇ,” ಎಂದು ದೇವರು ಕರೆದರು. ಅದಕ್ಕವನು, “ಇಗೋ, ಇದ್ದೇನೆ,” ಎಂದು ಉತ್ತರಕೊಟ್ಟನು.</verse>
				<verse number="5">ದೇವರು ಅವನಿಗೆ, “ಹತ್ತಿರ ಬರಬೇಡ! ನಿನ್ನ ಕಾಲಿನ ಕೆರಗಳನ್ನು ತೆಗೆದುಹಾಕು; ಏಕೆಂದರೆ ನೀನು ನಿಂತಿರುವ ಸ್ಥಳ ಪವಿತ್ರಭೂಮಿ,” ಎಂದು ಹೇಳಿದರು.</verse>
				<verse number="6">ಅದೂ ಅಲ್ಲದೆ, “ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು,” ಎಂದರು. ಆಗ ಮೋಶೆ ದೇವರನ್ನು ದಿಟ್ಟಿಸಿ ನೋಡಲು ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.</verse>
				<verse number="7">ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.</verse>
				<verse number="8">ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.</verse>
				<verse number="9">ಈಗ ಕೇಳು; “ಇಸ್ರಯೇಲರ ಮೊರೆ ನನಗೆ ಮುಟ್ಟಿದೆ. ಈಜಿಪ್ಟಿನವರು ಅವರಿಗೆ ಕೊಡುತ್ತಿರುವ ಉಪದ್ರವವನ್ನು ನಾನು ನೋಡಿದ್ದೇನೆ.</verse>
				<verse number="10">ಆದ್ದರಿಂದ ಹೋಗು; ನನ್ನ ಜನರಾಗಿರುವ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಹೊರತರುವುದಕ್ಕಾಗಿ ನಿನ್ನನ್ನು ಫರೋಹನ ಬಳಿಗೆ ಕಳಿಸುತ್ತಿದ್ದೇನೆ,” ಎಂದರು.</verse>
				<verse number="11">ಮೋಶೆ ದೇವರಿಗೆ, “ಫರೋಹನ ಸನ್ನಿಧಾನಕ್ಕೆ ಹೋಗುವುದಕ್ಕಾಗಲಿ ಇಸ್ರಯೇಲರನ್ನು ಈಜಿಪ್ಟಿನಿಂದ, ಕರೆದುಕೊಂಡು ಬರುವುದಕ್ಕಾಗಲಿ ನಾನು ಎಷ್ಟರವನು?” ಎಂದನು.</verse>
				<verse number="12">ಅದಕ್ಕೆ ದೇವರು, “ನಾನೇ ನಿನ್ನ ಸಂಗಡ ಇರುವೆನು; ನೀನು ನನ್ನ ಜನರನ್ನು ಈಜಿಪ್ಟಿನಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ. ನಿನ್ನನ್ನು ಕಳಿಸಿದವನು ನಾನೇ ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.</verse>
				<verse number="13">ಮೋಶೆ ದೇವರಿಗೆ, “ನಾನು ಇಸ್ರಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಜರ ದೇವರು ನನ್ನನ್ನು ನಿಮ್ಮ ಬಳಿಗೆ ಕಳಿಸಿದ್ದಾರೆ,’ ಎಂದು ಹೇಳಿದಾಗ ಅವರು ಒಂದು ವೇಳೆ, ‘ಆತನ ಹೆಸರೇನು?’ ಎಂದು ನನ್ನನ್ನು ಕೇಳಿದರೆ ನಾನೇನು ಉತ್ತರ ಕೊಡಬೇಕು?” ಎಂದು ಕೇಳಿದನು.</verse>
				<verse number="14">ಆಗ ದೇವರು ಹೀಗೆಂದರು: “ಇರುವವನಾಗಿ ಇರುವವನು ನಾನೇ; ನೀನು ಇಸ್ರಯೇಲರಿಗೆ 'ತಾನಾಗಿ ಇರುವವನು,' ನನ್ನನ್ನು ನಿಮ್ಮ ಬಳಿಗೆ ಕಳಿಸಿದ್ದಾನೆ ಎಂದು ಹೇಳು.”</verse>
				<verse number="15">ದೇವರು ಮೋಶೆಗೆ ಮತ್ತೆ ಇಂತೆಂದರು: “ನೀನು ಇಸ್ರಯೇಲರಿಗೆ, ‘ನಿಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ’ ಎಂದು ಹೇಳು. ಇದು ಸದಾಕಾಲಕ್ಕೂ ನನ್ನ ಹೆಸರು. ಈ ಹೆಸರಿನಿಂದಲೆ ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕು.</verse>
				<verse number="16">ನೀನು ಹೋಗಿ ಇಸ್ರಯೇಲರ ಹಿರಿಯರನ್ನು ಕೂಡಿಸು. ಅವರಿಗೆ, “ನಿಮ್ಮ ಪೂರ್ವಜರ ದೇವರು, ಅಂದರೆ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರು ಆಗಿರುವ ಸರ್ವೇಶ್ವರ ನನಗೆ ದರ್ಶನಕೊಟ್ಟು ನಿಮ್ಮ ವಿಷಯದಲ್ಲಿ ಹೀಗೆಂದಿದ್ದಾರೆ: ನಿಮ್ಮನ್ನೂ ಈಜಿಪ್ಟ್ ದೇಶದಲ್ಲಿ ನಿಮಗೆ ಸಂಭವಿಸಿದ್ದೆಲ್ಲವನ್ನೂ ನಾನು ಕಣ್ಣಾರೆ ಕಂಡು ತಿಳಿದುಕೊಂಡಿದ್ದೇನೆ.</verse>
				<verse number="17">ಈಜಿಪ್ಟಿನಲ್ಲಿ ನಿಮಗುಂಟಾಗಿ ಇರುವ ಸಂಕಷ್ಟಗಳಿಂದ ನಿಮ್ಮನ್ನು ಪಾರುಮಾಡಿ ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಬರಮಾಡಬೇಕೆಂದು ತೀರ್ಮಾನಿಸಿದ್ದೇನೆ’ ಎಂದು ತಿಳಿಸು.</verse>
				<verse number="18">“ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಯೇಲಿನ ಹಿರಿಯರು ಈಜಿಪ್ಟ್ ದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಹಿಬ್ರಿಯರ ದೇವರಾಗಿರುವ ಸರ್ವೇಶ್ವರ ನಮಗೆ ಪ್ರತ್ಯಕ್ಷರಾದರು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯೊಪ್ಪಿಸಬೇಕಾಗಿದೆ, ಅಪ್ಪಣೆಯಾಗಬೇಕು’ ಎಂದು ಕೇಳಿಕೊಳ್ಳಿ.</verse>
				<verse number="19">ಆ ಈಜಿಪ್ಟಿನ ಅರಸನು ಎಷ್ಟು ಬಲಾತ್ಕಾರ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ತಿಳಿದಿದ್ದೇನೆ.</verse>
				<verse number="20">ಆದಕಾರಣ ನನ್ನ ಭುಜಬಲವನ್ನು ಪ್ರದರ್ಶಿಸುವೆನು. \ಅಲ್ಲಿ ಮಹಾತ್ಕಾರ್ಯಗಳನ್ನು ಮಾಡಿ, ಈಜಿಪ್ಟ್ ದೇಶವನ್ನೆ ನಾನಾವಿಧವಾಗಿ ಬಾಧಿಸುವೆನು. ಆಮೇಲೆ ಅರಸನು ನಿಮ್ಮನ್ನು ಬಿಡುಗಡೆಮಾಡುವನು.</verse>
				<verse number="21">“ನನ್ನ ಜನರಿಗೆ ಈಜಿಪ್ಟಿನವರು ಅನುಕಂಪ ತೋರಿಸುವಂತೆ ಮಾಡುವೆನು. ಆದ್ದರಿಂದ ನೀವು ಅಲ್ಲಿಂದ ಹೊರಡುವಾಗ ಬರಿಗೈಯಲ್ಲಿ ಹೋಗಬೇಕಾಗುವುದಿಲ್ಲ.</verse>
				<verse number="22">ನಿಮ್ಮ ಪ್ರತಿಯೊಬ್ಬ ಮಹಿಳೆ ನೆರೆಹೊರೆಯ ಮಹಿಳೆಯರಿಂದಲೂ ನಿಮ್ಮ ಮನೆಯಲ್ಲೇ ತಂಗಿರುವ ಮಹಿಳೆಯರಿಂದಲೂ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ಬಟ್ಟೆಬರೆಗಳನ್ನು ಕೇಳಿಕೊಳ್ಳಲಿ. ಅವುಗಳನ್ನು ನಿಮ್ಮ ಮಕ್ಕಳುಮರಿಗಳಿಗೆ ತೊಡಿಸಿರಿ. ಹೀಗೆ ಈಜಿಪ್ಟರನ್ನು ಸೂರೆಮಾಡಿ ಹೊರಡುವಿರಿ.</verse>
			</chapter>
			<chapter number="4">
				<verse number="1">ಆಗ ಮೋಶೆ ಉತ್ತರ ನೀಡಿ,” ಆಲಿಸಬೇಕು; ಆ ಜನರು ನನ್ನನ್ನು ನಂಬದೆ ನನ್ನ ಮಾತಿಗೆ ಕಿವಿಗೊಡದೆ ಹೋಗಬಹುದು: ‘ಸರ್ವೇಶ್ವರ ಸ್ವಾಮಿ ನಿನಗೆ ಕಾಣಿಸಿಕೊಂಡಿದ್ದೇ ಇಲ್ಲ’ ಎಂದು ಹೇಳಬಹುದು” ಎಂದನು.</verse>
				<verse number="2">ಅದಕ್ಕೆ ಸರ್ವೇಶ್ವರ ಅವನನ್ನು, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದರು, ಅವನು, “ಇದು ಕೋಲು” ಎಂದನು.</verse>
				<verse number="3">ಸರ್ವೇಶ್ವರ ಅವನಿಗೆ, “ಅದನ್ನು ನೆಲದಲ್ಲಿ ಬಿಸಾಡು,” ಎಂದರು. ನೆಲದಲ್ಲಿ ಬಿಸಾಡುತ್ತಲೇ ಅದು ಹಾವಾಯಿತು! ಅದನ್ನು ಕಂಡ ಮೋಶೆ ಭಯಪಟ್ಟು ಓಡಿಹೋದನು.</verse>
				<verse number="4">ಸರ್ವೇಶ್ವರ ಅವನಿಗೆ, “ಕೈಚಾಚಿ ಅದರ ಬಾಲವನ್ನು ಹಿಡಿ,” ಎಂದರು. ಅಂತೆಯೇ ಹಿಡಿದಾಗ ಅದು ಕೋಲು ಆಯಿತು. ಆಗ ಸರ್ವೇಶ್ವರ ಅವನಿಗೆ,</verse>
				<verse number="5">“ಇದರಿಂದ ಆ ಜನರು ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನಿನಗೆ ಕಾಣಸಿದ್ದು ನಿಜ ಎಂಬುದನ್ನು ನಂಬುವರು,” ಎಂದು ಹೇಳಿದರು.</verse>
				<verse number="6">ಮತ್ತೆ ಸರ್ವೇಶ್ವರ ಅವನಿಗೆ, “ನಿನ್ನ ಕೈಯನ್ನು ನಿನ್ನ ಉಡಿಗೆಯಲ್ಲಿ ಇಟ್ಟುಕೊ,” ಎಂದರು. ಅಂತೆಯೇ ಉಡಿಗೆಯಲ್ಲಿ ಇಟ್ಟು ಹೊರಗೆ ತೆಗೆದಾಗ ಅವನ ಕೈ ತೊನ್ನುಹತ್ತಿ ಹಿಮದಂತೆ ಬೆಳ್ಳಗಾಗಿ ಇತ್ತು.</verse>
				<verse number="7">ಸರ್ವೇಶ್ವರ ಅವನಿಗೆ, “ನಿನ್ನ ಕೈಯನ್ನು ತಿರುಗಿ ಉಡಿಗೆಯಲ್ಲಿ ಸೇರಿಸು,” ಎಂದು ಹೇಳಿದರು. ಹಾಗೆಯೆ ಅವನು ಅದನ್ನು ಉಡಿಗೆಯಲ್ಲಿ ಸೇರಿಸಿದನು. ಬಳಿಕ ತೆಗೆದು ನೋಡಿದಾಗ ಅದು ಉಳಿದ ಮೈಯಂತೆಯೇ ಆಗಿತ್ತು.</verse>
				<verse number="8">ಆಗ ಸರ್ವೇಶ್ವರ ಅವನಿಗೆ, “ಆ ಜನರು ನಿನ್ನನ್ನು ನಂಬದೆ ಮೊದಲನೆಯ ಸೂಚಕಕಾರ್ಯವನ್ನು ಅರ್ಥಮಾಡಿಕೊಳ್ಳದೆ ಹೋದರೂ ಎರಡನೆಯದನ್ನು ಅರ್ಥಮಾಡಿಕೊಂಡು ನಂಬುವರು.</verse>
				<verse number="9">ಈ ಎರಡು ಸೂಚಕಕಾರ್ಯಗಳನ್ನೂ ಅವರು ಮನಸ್ಸಿಗೆ ತಂದುಕೊಳ್ಳದೆ ಹಾಗು ನಿನ್ನ ಮಾತನ್ನು ನಂಬದೆ ಹೋದರೆ ನೀನು ನೈಲ್ ನದಿಯಿಂದ ನೀರನ್ನು ತೆಗೆದುಕೊಂಡು ಒಣನೆಲದ ಮೇಲೆ ಸುರಿ. ಆಗ ನೆಲದಲ್ಲಿ ಸುರಿದ ನೀರು ರಕ್ತವಾಗುವುದು,” ಎಂದು ಹೇಳಿದರು.</verse>
				<verse number="10">ಆದರೆ ಮೋಶೆ ಸರ್ವೇಶ್ವರನಿಗೆ, “ಸ್ವಾಮಿ, ನಾನು ವಾಕ್ಚಾತುರ್ಯ ಇಲ್ಲದವನು; ಮೊದಲಿನಿಂದಲೂ ಹಾಗು ತಾವು ನಿಮ್ಮ ದಾಸನ ಸಂಗಡ ಮಾತಾಡಿದ ಮೇಲೆಯೂ ಹಾಗೆಯೇ ಇದ್ದೇನೆ. ನನ್ನ ಮಾತು ತೊದಲು, ನನ್ನ ನಾಲಿಗೆ ಮಂದ,” ಎಂದನು.</verse>
				<verse number="11">ಅದಕ್ಕೆ ಸರ್ವೇಶ್ವರ, “ಮನುಷ್ಯರಿಗೆ ಬಾಯಿಕೊಟ್ಟವರು ಯಾರು? ಒಬ್ಬನನ್ನು ಮೂಕನಾಗಿ, ಮತ್ತೊಬ್ಬನನ್ನು ಕಿವುಡನಾಗಿ, ಇನ್ನೊಬ್ಬನನ್ನು ಕಣ್ಣುಳ್ಳವನಾಗಿ, ಮಗದೊಬ್ಬನನ್ನು ಕಣ್ಣಿಲ್ಲದವನಾಗಿ ಇಡುವವರು ಯಾರು? ಸರ್ವೇಶ್ವರನಾಗಿರುವ ನಾನೇ ಅಲ್ಲವೆ?</verse>
				<verse number="12">ಆದುದರಿಂದ ಈಗಲೇ ಹೊರಡು; ನಿನ್ನ ಬಾಯಲ್ಲಿ ನಾನೇ ಇರುವೆನು; ನೀನು ಮಾತಾಡಬೇಕಾದುದನ್ನು ನಿನಗೆ ಕಲಿಸಿಕೊಡುವೆನು,” ಎಂದು ಹೇಳಿದರು.</verse>
				<verse number="13">ಅದಕ್ಕೆ ಮೋಶೆ, “ಸ್ವಾಮೀ, ಈ ಕಾರ್ಯಕ್ಕೆ ತಾವು ಬೇರೊಬ್ಬನನ್ನು ನೇಮಿಸಬೇಕು,” ಎನ್ನಲು, ಸರ್ವೇಶ್ವರ ಅವನ ಮೇಲೆ ಸಿಟ್ಟುಗೊಂಡರು.</verse>
				<verse number="14">ಅವನಿಗೆ, “ಲೇವಿಯನಾದ ಆರೋನನು ನಿನಗೆ ಅಣ್ಣನಲ್ಲವೆ? ಅವನು ಚೆನ್ನಾಗಿ ಮಾತಾಡಬಲ್ಲನೆಂದು ನನಗೆ ಗೊತ್ತಿದೆ. ಇಗೋ, ಅವನೇ ನಿನ್ನನ್ನು ಭೇಟಿಯಾಗಲು ಬರುತ್ತಿದ್ದಾನೆ. ನಿನ್ನನ್ನು ಕಂಡು ಆನಂದಿಸಲಿದ್ದಾನೆ.</verse>
				<verse number="15">ನೀನು ಅವನ ಸಂಗಡ ಮಾತಾಡಿ ಹೇಳಬೇಕಾದ ವಿಷಯಗಳನ್ನು ತಿಳಿಸು. ನಾನು ನಿನಗೂ ಅವನಿಗೂ ಹೇಗೆ ಮಾತಾಡಬೇಕೆಂದು ತಿಳಿಸಿ ನೀವು ಮಾಡಬೇಕಾದುದನ್ನು ಕಲಿಸುವೆನು.</verse>
				<verse number="16">ನಿನ್ನ ಪರವಾಗಿ ಅವನೇ ಆ ಜನರ ಸಂಗಡ ಮಾತಾಡುವನು. ಅವನು ನಿನಗೆ ಬಾಯಂತಿರುವನು. ನೀನು ಅವನಿಗೆ ದೇವರಂತೆ ಇರುವೆ.</verse>
				<verse number="17">ಈ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗು. ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವೆ,” ಎಂದರು.</verse>
				<verse number="18">ಇದಾದ ಮೇಲೆ ಮೋಶೆ ತನ್ನ ಮಾವನಾದ ಇತ್ರೋನನ ಬಳಿಗೆ ಹಿಂದಿರುಗಿ ಬಂದು, “ನಾನು ಈಜಿಪ್ಟ್ ದೇಶದಲ್ಲಿರುವ ಸ್ವಜನರ ಬಳಿಗೆ ಮರಳಿ ಹೋಗಿ ಅವರು ಜೀವದಿಂದ ಇದ್ದಾರೋ ಇಲ್ಲವೋ ನೋಡುವುದಕ್ಕೆ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದನು. ಇತ್ರೋನನು, “ಸುಖವಾಗಿ ಹೋಗಿ ಬಾ,” ಎಂದನು.</verse>
				<verse number="19">ಮಿದ್ಯಾನ್ ನಾಡಿನಲ್ಲಿ ಸರ್ವೇಶ್ವರ ಮೋಶೆಗೆ, “ನೀನು ಈಜಿಪ್ಟ್ ದೇಶಕ್ಕೆ ಮರಳಿ ಹೋಗು. ನಿನ್ನನ್ನು ಕೊಲ್ಲಬೇಕೆಂದಿದ್ದವರೆಲ್ಲರು ಸತ್ತುಹೋದರು,” ಎಂದು ತಿಳಿಸಿದರು.</verse>
				<verse number="20">ಆದ್ದರಿಂದ ಮೋಶೆ ತನ್ನ ಮಡದಿ ಮಕ್ಕಳನ್ನು ಹೇಸರ ಕತ್ತೆಯ ಮೇಲೆ ಏರಿಸಿಕೊಂಡು ಈಜಿಪ್ಟಿಗೆ ಹೊರಟುಹೋದನು. ದೇವದಂಡ ಅವನ ಕೈಯಲ್ಲಿತ್ತು.</verse>
				<verse number="21">ಸರ್ವೇಶ್ವರ ಮೋಶೆಗೆ ಮತ್ತೆ ಇಂತೆಂದರು: “ನೀನು ಈಜಿಪ್ಟಿಗೆ ಮರಳಿದಾಗ ನಾನು ನಿನಗೆ ತೋರಿಸಿಕೊಟ್ಟ ಸೂಚಕಕಾರ್ಯಗಳನ್ನೆಲ್ಲಾ ಫರೋಹ ರಾಜನ ಮುಂದೆ ಮಾಡಿ ತೋರಿಸು. ಆದರೆ ನಾನು ಅವನ ಹೃದಯವನ್ನು ಕಲ್ಲಾಗಿಸುವೆನು. ಅವನು ಇಸ್ರಯೇಲರನ್ನು ಹೋಗಗೊಡಿಸುವುದಿಲ್ಲ.</verse>
				<verse number="22">ಆಗ ನೀನು ಅವನಿಗೆ ತಿಳಿಸಬೇಕಾದುದು, 'ಸರ್ವೇಶ್ವರನು ಹೇಳುವುದನ್ನು ಕೇಳು: ಇಸ್ರಯೇಲ್ ಜನತೆ ನನಗೆ ಮಗನಂತೆ, ಜ್ಯೇಷ್ಠಪುತ್ರನಂತಿದೆ.</verse>
				<verse number="23">ನನ್ನನ್ನು ಆರಾಧಿಸಲು ನಿನ್ನ ದೇಶದಿಂದ ಹೊರಡುವುದಕ್ಕೆ ಅವನಿಗೆ ಅಪ್ಪಣೆಕೊಡು.' ಇದಕ್ಕೆ ನೀನು ಒಪ್ಪದೆ ಹೋದರೆ ನಾನು ನಿನ್ನ ಜ್ಯೇಷ್ಠ ಪುತ್ರನನ್ನು ಕೊಲ್ಲುವೆನು,”</verse>
				<verse number="24">ಈಜಿಪ್ಟಿಗೆ ಹೋಗುವ ದಾರಿಯಲ್ಲಿದ್ದ ಛತ್ರವೊಂದರಲ್ಲಿ ಸರ್ವೇಶ್ವರ ಅವನೆದುರಿಗೆ ಬಂದು ಅವನ ಪ್ರಾಣ ತೆಗೆಯಬೇಕೆಂದಿದ್ದರು.</verse>
				<verse number="25">ಆಗ ಚಿಪ್ಪೋರಳು ಕಲ್ಲಿನ ಚೂರಿಯಿಂದ ತನ್ನ ಮಗನಿಗೆ ಸುನ್ನತಿ ಮಾಡಿ ಮೋಶೆಗೆ, “ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗ,” ಎಂದು ಹೇಳಿ</verse>
				<verse number="26">ಕತ್ತರಿಸಿದ ಮುಂದೊಗಲನ್ನು ಅವನ ಪಾದಗಳಿಗೆ ಮುಟ್ಟಿಸಿದಳು. ಆಗ ಸರ್ವೇಶ್ವರ ಅವನನ್ನು ಉಳಿಸಿದರು. ಆಕೆ ಸುನ್ನತಿಯ ನಿಮಿತ್ತವೇ “ನೀನು ನನಗೆ ರಕ್ತಧಾರೆಯಿಂದಾದ ಮದಲಿಂಗ,” ಎಂದು ಹೇಳಿದ್ದು.</verse>
				<verse number="27">ಇದಲ್ಲದೆ ಸರ್ವೇಶ್ವರ ಆರೋನನಿಗೆ, “ನೀನು ಮೋಶೆಯನ್ನು ಎದುರುಗೊಳ್ಳಲು ಮರುಭೂಮಿಗೆ ತೆರಳು,” ಎಂದರು. ಅಂತೆಯೇ ಆರೋನನು ಹೋಗಿ ದೇವರ ಬೆಟ್ಟದಲ್ಲಿ ಮೋಶೆಯನ್ನು ಎದುರುಗೊಂಡು ಮುದ್ದಿಟ್ಟನು.</verse>
				<verse number="28">ಆಗ ಮೋಶೆ, ಸರ್ವೇಶ್ವರ ಸ್ವಾಮಿ ತನ್ನನ್ನು ಕಳಿಸುವಾಗ ಯಾವ ಮಾತುಗಳನ್ನು ಹೇಳಿದರೋ ಏನೇನು ಸೂಚಕಕಾರ್ಯಗಳು ಮಾಡಬೇಕೆಂದು ಆಜ್ಞಾಪಿಸಿದರೋ ಅವುಗಳನ್ನೆಲ್ಲ ಆರೋನನಿಗೆ ತಿಳಿಸಿದನು.</verse>
				<verse number="29">ತರುವಾಯ ಅವರಿಬ್ಬರು ಹೋಗಿ ಇಸ್ರಯೇಲರ ಹಿರಿಯರನ್ನೆಲ್ಲ ಕೂಡಿಸಿದರು.</verse>
				<verse number="30">ಮೋಶೆಗೆ ಸರ್ವೇಶ್ವರ ಹೇಳಿದ ಮಾತುಗಳನ್ನೆಲ್ಲ ಆರೋನನು ಆ ಜನರಿಗೆ ತಿಳಿಸಿದನು. ಮೋಶೆ ಅವರ ಮುಂದೆ ಆ ಸೂಚಕಕಾರ್ಯಗಳನ್ನು ಮಾಡಿದನು. ಜನರು ನಂಬಿದರು.</verse>
				<verse number="31">ಸರ್ವೇಶ್ವರ ಸ್ವಾಮಿ ತಮ್ಮನ್ನು ಭೇಟಿಮಾಡಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡಿದ್ದಾರೆಂದು ತಿಳಿದ ಆ ಇಸ್ರಯೇಲರು ತಲೆಬಾಗಿ ಆರಾಧಿಸಿದರು.</verse>
			</chapter>
			<chapter number="5">
				<verse number="1">ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಬಂದರು. “ಇಸ್ರಯೇಲರ ದೇವರಾದ ಸರ್ವೇಶ್ವರನ ಮಾತುಗಳಿವು: ‘ನನ್ನ ಜನರು ಮರುಭೂಮಿಯಲ್ಲಿ ನನ್ನ ಗೌರವಾರ್ಥ ಒಂದು ಹಬ್ಬವನ್ನು ಆಚರಿಸಬೇಕಾಗಿದೆ. ಅದಕ್ಕೆ ಅವರಿಗೆ ಅಪ್ಪಣೆಕೊಡಬೇಕು’,\ ಎಂದರು.</verse>
				<verse number="2">ಅದಕ್ಕೆ ಫರೋಹನು, “ 'ಸರ್ವೇಶ್ವರ' ಎಂಬುವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಯೇಲರನ್ನು ಹೋಗಬಿಡಬೇಕೊ? ಆ ಸರ್ವೇಶ್ವರನು ಯಾರೋ ನನಗೆ ಗೊತ್ತಿಲ್ಲ. ಇಸ್ರಯೇಲರನ್ನು ನಾನು ಹೋಗಬಿಡುವುದಿಲ್ಲ,” ಎಂದು ಬಿಟ್ಟನು.</verse>
				<verse number="3">ಮೋಶೆ ಮತ್ತು ಆರೋನರು, “ಹಿಬ್ರಿಯರ ದೇವರು ನಮಗೆ ದರ್ಶನವಿತ್ತರು. ಅಪ್ಪಣೆ ಆದರೆ ನಾವು ಮರುಭೂಮಿಯಲ್ಲಿ ಮೂರು ದಿವಸದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯರ್ಪಿಸಿ ಬರುತ್ತೇವೆ. ಹಾಗೆ ಮಾಡದೆಹೋದರೆ ಅವರು ನಮ್ಮನ್ನು ವ್ಯಾಧಿಯಿಂದಲೋ ಕತ್ತಿಯಿಂದಲೋ ಸಂಹಾರ ಮಾಡುವರು,” ಎಂದರು.</verse>
				<verse number="4">ಅವರಿಗೆ ಆ ಈಜಿಪ್ಟರ ಅರಸನು, “ಎಲೈ ಮೋಶೆ - ಆರೋನರೇ, ನೀವು ಮಾಡುತ್ತಾ ಇರುವುದೇನು? ಈ ಜನರು ತಮ್ಮ ಕೆಲಸವನ್ನು ಬಿಡುವಂತೆ ಮಾಡುತ್ತಿದ್ದೀರಿ. ನಡೆಯಿರಿ ಗುಲಾಮಗಿರಿಗೆ” ಎಂದುಬಿಟ್ಟನು.</verse>
				<verse number="5">ಇದೂ ಅಲ್ಲದೆ ಆ ಫರೋಹನು, “ನೋಡಿ, ನಾಡಿನಲ್ಲಿ ಈ ಜನರ ಸಂಖ್ಯೆ ಹೆಚ್ಚಾಗಿಬಿಟ್ಟಿದೆ! ಇವರು ತಮ್ಮ ಕೆಲಸದಿಂದ ತಪ್ಪಿಸಿಕೊಳ್ಳುವುದಕ್ಕೆ ನೀವೇ ಕಾರಣ ಆಗುತ್ತಿದ್ದೀರಿ,” ಎಂದನು.</verse>
				<verse number="6">ಅದೇ ದಿನ, ಕೆಲಸಮಾಡಿಸುವವರನ್ನೂ ಮೇಸ್ತ್ರಿಗಳನ್ನೂ ಕರೆಯಿಸಿ,</verse>
				<verse number="7">\ಇನ್ನು ಮೇಲೆ ನೀವು ಈ ಜನರಿಗೆ ಇಟ್ಟಿಗೆ ಮಾಡುವುದಕ್ಕೆ ಹುಲ್ಲನ್ನು ಕೊಡಕೂಡದು; ಅವರೇ ಹೋಗಿ ಹುಲ್ಲನ್ನು ಹುಡುಕಿಕೊಳ್ಳಲಿ.</verse>
				<verse number="8">ಆದರೆ ಇಟ್ಟಿಗೆಗಳ ಲೆಕ್ಕವನ್ನು ಎಂದಿನಂತೆ ಒಪ್ಪಿಸಲಿ.ಅದನ್ನು ಕಡಿಮೆ ಮಾಡಕೂಡದು. ಇವರು ಮೈಗಳ್ಳರು. ಆದ್ದರಿಂದಲೇ, ‘ನಾವು ಹೋಗಿ ನಮ್ಮ ದೇವರಿಗೆ ಬಲಿಯರ್ಪಿಸಿ ಬರುವುದಕ್ಕೆ ಅಪ್ಪಣೆಯಾಗಬೇಕು,’ ಎಂದು ಬೊಬ್ಬೆಹಾಕುತ್ತಾ ಇದ್ದಾರೆ.</verse>
				<verse number="9">ನೀವು ಅವರಿಂದ ಇನ್ನೂ ಕಷ್ಟಕರವಾದ ಕೆಲಸ ಮಾಡಿಸಬೇಕು. ಕೆಲಸ ಹೆಚ್ಚಾದರೆ ಸುಳ್ಳುಪೊಳ್ಳು ಮಾತುಗಳಿಗೆ ಕಿವಿಗೊಡಲು ಆಸ್ಪದಯಿರುವುದಿಲ್ಲ,” ಎಂದು ಆಜ್ಞಾಪಿಸಿದನು.</verse>
				<verse number="10">ಆದುದರಿಂದ ಕೆಲಸದ ಮೇಲ್ವಿಚಾರಕರೂ ಮೇಸ್ತ್ರಿಗಳೂ ಆ ಜನರಿಗೆ, “ನಿಮಗೆ ಹುಲ್ಲು ಕೊಡಕೂಡದೆಂದು ಫರೋಹನ ಅಪ್ಪಣೆಯಾಗಿದೆ.</verse>
				<verse number="11">ನೀವೇ ಹೋಗಿ ಎಲ್ಲಿಂದಾದರು ತಂದುಕೊಳ್ಳಿ. ಆದರೂ ನೀವು ಮಾಡಬೇಕಾದ ಕೆಲಸ ಮಾತ್ರ ಕಿಂಚಿತ್ತೂ ಕಡಿಮೆಯಾಗಕೂಡದು,” ಎಂದು ವಿಧಿಸಿದರು.</verse>
				<verse number="12">ಆ ಜನರು ಈಜಿಪ್ಟ್ ದೇಶದಲ್ಲೆಲ್ಲಾ ಸುತ್ತಿ, ಹುಲ್ಲು ಸಿಕ್ಕದೆ ಕೂಳೆಕಿತ್ತು ಕೂಡಿಸಿದರು.</verse>
				<verse number="13">ಮೇಲ್ವಿಚಾರಕರು, “ನಿಮಗೆ ಹುಲ್ಲಿದ್ದ ಕಾಲದಲ್ಲಿ ಹೇಗೋ ಹಾಗೆ ಪ್ರತಿದಿನದ ಕೆಲಸವನ್ನು ಆಯಾ ದಿನದಲ್ಲಿ ಮುಗಿಸಬೇಕು\ ಎಂದು ಹೇಳಿ ಅವಸರಪಡಿಸುತ್ತಿದ್ದರು.</verse>
				<verse number="14">“ನೀವು ಇಟ್ಟಿಗೆಗಳ ಲೆಕ್ಕವನ್ನು ಹಿಂದೆ ಒಪ್ಪಿಸುತ್ತಿದ್ದಂತೆ ನಿನ್ನೆ ಮತ್ತು ಇಂದು ಏಕೆ ಒಪ್ಪಿಸಲಿಲ್ಲ,” ಎಂದು ಹೇಳಿ ಫರೋಹನ ಅಧಿಕಾರಿಗಳು ತಾವೇ ನೇಮಿಸಿದ್ದ ಇಸ್ರಯೇಲ್ ಮೇಸ್ತ್ರಿಗಳನ್ನು ಹೊಡೆಸುತ್ತಿದ್ದರು.</verse>
				<verse number="15">ಈ ಇಸ್ರಯೇಲ್ ಮೇಸ್ತ್ರಿಗಳು ಫರೋಹನ ಬಳಿಗೆ ಬಂದು, “ಒಡೆಯಾ, ತಮ್ಮ ದಾಸರಾದ ನಮಗೆ ಹೀಗೆ ಮಾಡುವುದು ಸರಿಯೇ?</verse>
				<verse number="16">ಅಧಿಕಾರಿಗಳು ಹುಲ್ಲು ಒದಗಿಸದೆ ಇಟ್ಟಿಗೆಗಳನ್ನು ಮಾಡಬೇಕೆನ್ನುತ್ತಾರೆ. ಇದರಿಂದ ದಾಸರಾದ ನಾವು ಏಟು ತಿನ್ನಬೇಕಾಯಿತು. ತಪ್ಪು ತಮ್ಮ ಜನರದೇ,” ಎಂದು ದೂರಿತ್ತರು.</verse>
				<verse number="17">ಅದಕ್ಕೆ ಅವನು, “ನೀವು ಒಳ್ಳೆಯ ಮೈಗಳ್ಳರು! ನಾವು ಹೋಗಿ ಸರ್ವೇಶ್ವರನಿಗೆ ಬಲಿಯರ್ಪಿಸಿಬರಬೇಕು, ಎನ್ನುವುದಕ್ಕೆ ಇದೇ ಕಾರಣ.</verse>
				<verse number="18">ನಡೆಯಿರಿ ಕೆಲಸಕ್ಕೆ; ನಿಮಗೆ ಹುಲ್ಲು ಕೊಡುವುದಿಲ್ಲ; ಆದರೂ ಇಟ್ಟಿಗೆಗಳ ಲೆಕ್ಕವನ್ನು ತಪ್ಪದೆ ಒಪ್ಪಿಸಲೇಬೇಕು,” ಎಂದನು.</verse>
				<verse number="19">ದಿನದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂದು ಕಟ್ಟಪ್ಪಣೆ ಆದುದರಿಂದ ಇಸ್ರಯೇಲ್ ಮೇಸ್ತ್ರಿಗಳು ತಾವು ಎಂಥ ಬಿಕ್ಕಟ್ಟಿಗೆ ಸಿಕ್ಕಿಕೊಂಡೆವೆಂದು ಗ್ರಹಿಸಿಕೊಂಡರು.</verse>
				<verse number="20">ಫರೋಹನ ಬಳಿಯಿಂದ ಹಿಂದಿರುಗಿದಾಗ ಅವರನ್ನು ಎದುರುಗೊಳ್ಳಲು ಮೋಶೆ ಮತ್ತು ಆರೋನರು ಕಾದಿದ್ದರು.</verse>
				<verse number="21">ಅವರಿಗೆ ಆ ಮೇಸ್ತ್ರಿಗಳು, “ನೀವು ಮಾಡಿದ ದುಷ್ಕೃತ್ಯವನ್ನು ವಿಚಾರಿಸಿ ಸರ್ವೇಶ್ವರ ನಿಮಗೆ ತಕ್ಕ ಶಿಕ್ಷೆಯನ್ನು ವಿಧಿಸಲಿ. ಏಕೆಂದರೆ ಫರೋಹನಿಗೂ ಅವನ ಸೇವಕರಿಗೂ ನಾವು ಅಸಹ್ಯರಾಗುವಂತೆ ಮಾಡಿಬಿಟ್ಟಿರಿ. ನಮ್ಮನ್ನು ಕೊಲ್ಲಲು ಅವರ ಕೈಗೆ ಕತ್ತಿಯನ್ನೇ ಕೊಟ್ಟಂತಾಗಿದೆ,” ಎಂದು ನಿಂದಿಸಿದರು.</verse>
				<verse number="22">ಆಗ ಮೋಶೆ ಸರ್ವೇಶ್ವರನ ಸನ್ನಿಧಿಗೆ ಮತ್ತೆ ಬಂದು, “ಸ್ವಾಮೀ, ಈ ಜನರಿಗೆ ಹೀಗೇಕೆ ಮಾಡಿದಿರಿ? ನನ್ನನ್ನೇಕೆ ಇಲ್ಲಿಗೆ ಕಳಿಸಿದಿರಿ?</verse>
				<verse number="23">ನಾನು ಫರೋಹನ ಬಳಿಗೆ ಹೋಗಿ ನಿಮ್ಮ ಹೆಸರಿನಲ್ಲಿ ಮಾತಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಿದ್ದಾನೆ. ನೀವಾದರೋ ಅವರನ್ನು ಬಿಡುಗಡೆ ಮಾಡಲು ಏನನ್ನೂ ಮಾಡಿಲ್ಲ,” ಎಂದು ಮೊರೆಯಿಟ್ಟನು.</verse>
			</chapter>
			<chapter number="6">
				<verse number="1">ಅದಕ್ಕೆ ಸರ್ವೇಶ್ವರ ಸ್ವಾಮಿ ಮೋಶೆಗೆ, “ನಾನು ಫರೋಹನಿಗೆ ಮಾಡಲು ಹೋಗುವುದನ್ನು ನೀನು ಇಷ್ಟರಲ್ಲೇ ನೋಡುವೆ. ಅವನು ನನ್ನ ಭುಜಬಲವನ್ನು ಕಂಡು ಅವರನ್ನು ಹೋಗಲು ಬಿಡುವನು. ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ನಾಡಿನಿಂದ ಹೊರಡಿಸುವನು,” ಎಂದರು.</verse>
				<verse number="2">ದೇವರು ಮೋಶೆಯ ಸಂಗಡ ಮಾತಾಡಿ ಇಂತೆಂದರು:</verse>
				<verse number="3">“ನಾನು ಸರ್ವೇಶ್ವರ, ಅಬ್ರಹಾಮ, ಇಸಾಕ ಹಾಗು ಯಕೋಬರಿಗೆ ನಾನು ‘ಸರ್ವಶಕ್ತನಾದ ದೇವರು ಎಂಬ ಹೆಸರುಳ್ಳವನಾಗಿ ಕಾಣಿಸಿಕೊಂಡನೇ ಹೊರತು ‘ಸರ್ವೇಶ್ವರ’ ಎಂಬ ನನ್ನ ಹೆಸರಿನಿಂದ ಅವರಿಗೆ ಗೋಚರವಾಗಲಿಲ್ಲ.</verse>
				<verse number="4">ಅಲ್ಲದೆ ಅವರು ಪ್ರವಾಸಿಗಳಾಗಿ ತಂಗಿದ್ದ ಕಾನಾನ್ ನಾಡನ್ನು ಅವರಿಗೆ ಸ್ವಂತ ನಾಡಾಗಿ ಕೊಡುವೆನೆಂದು ದೃಢವಾಗ್ದಾನ ಮಾಡಿದವನು ನಾನೇ.</verse>
				<verse number="5">ಈಜಿಪ್ಟಿನವರು ಗುಲಾಮರನ್ನಾಗಿಸಿಕೊಂಡಿರುವ ಇಸ್ರಯೇಲರ ಗೋಳು ನನಗೆ ಕೇಳಿಸಿದೆ. ನಾನು ಮಾಡಿದ ವಾಗ್ದಾನವನ್ನು ನೆನಪಿಗೆ ತಂದುಕೊಂಡಿದ್ದೇನೆ.</verse>
				<verse number="6">ಆದುದರಿಂದ ನೀನು ಇಸ್ರಯೇಲರಿಗೆ ನನ್ನ ಪರವಾಗಿ ಹೀಗೆಂದು ಹೇಳು: ‘ನಾನೇ ಸರ್ವೇಶ್ವರ. ಈಜಿಪ್ಟಿನವರು ನಿಮ್ಮ ಮೇಲೆ ಹೊರಿಸಿರುವ ದುಡಿಮೆಯನ್ನು ನೀಗಿಸುವೆನು, ದಾಸತ್ವವನ್ನು ತೊಲಗಿಸುವೆನು. ಅವರಿಗೆ ಕಠಿಣಶಿಕ್ಷೆಗಳನ್ನು ವಿಧಿಸುವೆನು, ನಿಮ್ಮನ್ನು ಸಂರಕ್ಷಿಸುವೆನು.</verse>
				<verse number="7">ನಾನು ನಿಮ್ಮನ್ನು ನನ್ನ ಪ್ರಜೆಯಾಗಿ ಮಾಡುವೆನು; ನಾನು ನಿಮ್ಮ ದೇವರಾಗಿರುವೆನು. ಈಜಿಪ್ಟಿನವರು ಹೊರಿಸುವ ದುಡಿಮೆಯನ್ನು ನಾನು ನಿಮ್ಮಿಂದ ಬಿಡಿಸಿದಾಗ ಸರ್ವೇಶ್ವರ ಎಂಬ ನಾನೇ ನಿಮ್ಮ ದೇವರೆಂದು ನಿಮಗೆ ತಿಳಿದುಬರುವುದು.</verse>
				<verse number="8">ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಕೋಬರಿಗೆ ಕೊಡುವೆನೆಂದು ಪ್ರಮಾಣ ಪೂರ್ವಕವಾಗಿ ಹೇಳಿದ ನಾಡಿಗೆ ನಿಮ್ಮನ್ನು ಸೇರಿಸುವೆನು. ಅದನ್ನು ನಿಮಗೆ ಸ್ವಂತ ನಾಡಾಗಿ ಕೊಡುವೆನು. ಸರ್ವೇಶ್ವರನು ನಾನೇ’ ಎಂದು ಅವರಿಗೆ ಹೇಳು,” ಎಂದರು.</verse>
				<verse number="9">ಮೋಶೆ ಈ ಮಾತುಗಳನ್ನು ಇಸ್ರಯೇಲರಿಗೆ ತಿಳಿಸಿದನು. ಆದರೂ ಅವನ ಮಾತಿಗೆ ಕಿವಿಗೊಡಲಿಲ್ಲ. ಏಕೆಂದರೆ ಅವರ ಮನಸ್ಸು ಅಷ್ಟು ಕುಗ್ಗಿಹೋಗಿತ್ತು, ಅವರ ದಾಸತ್ವ ಅಷ್ಟು ಕ್ರೂರವಾಗಿತ್ತು.</verse>
				<verse number="10">ಆಗ ಸರ್ವೇಶ್ವರ ಮೋಶೆಯ ಸಂಗಡ ಮಾತನಾಡಿ,</verse>
				<verse number="11">“ನೀನು ಈಜಿಪ್ಟಿನವರ ಅರಸ ಫರೋಹನ ಬಳಿಗೆ ಹೋಗು. ಅವನಿಗೆ, ‘ಇಸ್ರಯೇಲರು ನಿನ್ನ ದೇಶದಿಂದ ಹೊರಟು ಹೋಗುವುದಕ್ಕೆ ಅಪ್ಪಣೆಕೊಡಬೇಕು’ ಎಂದು ಹೇಳು,” ಎಂದರು.</verse>
				<verse number="12">ಅದಕ್ಕೆ ಮೋಶೆ ಸರ್ವೇಶ್ವರನ ಸನ್ನಿಧಿಯಲ್ಲಿ, “ಆಲಿಸಬೇಕು, ಇಸ್ರಯೇಲರೇ ನನ್ನ ಮಾತನ್ನು ಕೇಳಲಿಲ್ಲ; ಇನ್ನು ಫರೋಹನು ಕಿವಿಗೊಟ್ಟಾನೆ? ನನಗಾದರೂ ಚುರುಕಾದ ನಾಲಿಗೆಯಿಲ್ಲ,” ಎಂದನು.</verse>
				<verse number="13">ಸರ್ವೇಶ್ವರ ಮೋಶೆ ಮತ್ತು ಆರೋನರ ಸಂಗಡ ಮಾತಾಡಿ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಬೇಕೆಂದು ಅವರಿಗೆ ಆಜ್ಞಾಪಿಸಿ ಅವರನ್ನು ಇಸ್ರಯೇಲರ ಬಳಿಗೂ ಅರಸ ಫರೋಹನ ಬಳಿಗೂ ಕಳಿಸಿದರು.</verse>
				<verse number="14">ಅವರ ಗೋತ್ರಗಳ ಮೂಲಪುರುಷರು ಇವರು: ಇಸ್ರಯೇಲನ ಜ್ಯೇಷ್ಠ ಪುತ್ರನಾದ ರೂಬೇನನಿಗೆ ಹನೋಕ್, ಫಲ್ಲು, ಹೆಚ್ರೋನ್ ಮತ್ತು ಕರ್ಮೀ ಎಂಬವರು ಮಕ್ಕಳು. ಇವರೇ ರೂಬೇನನಿಂದ ಉಂಟಾದ ಗೋತ್ರಗಳಿಗೆ ಮೂಲ ಪುರುಷರು.</verse>
				<verse number="15">ಸಿಮೆಯೋನನಿಗೆ ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಕಾನಾನ್ಯ ಮಹಿಳೆಯಿಂದ ಹುಟ್ಟಿದ ಸೌಲ ಎಂಬವರು ಮಕ್ಕಳು. ಇವರೇ ಸಿಮೆಯೋನನಿಂದ ಉಂಟಾದ ಗೋತ್ರಗಳಿಗೆ ಮೂಲಪುರುಷರು.</verse>
				<verse number="16">ವಂಶಾವಳಿಗಳ ಪ್ರಕಾರ ಲೇವಿಯ ಮಕ್ಕಳು ಇವರು - ಗೇರ್ಷೋನ್, ಕೆಹಾತ್ ಮತ್ತು ಮೆರಾರೀ. ಲೇವಿ ನೂರಮೂವತ್ತೇಳು ವರ್ಷ ಬದುಕಿದ್ದನು.</verse>
				<verse number="17">ಗೋತ್ರಗಳನ್ನು ಸ್ಥಾಪಿಸಿದ ಗೇರ್ಷೋನನ ಮಕ್ಕಳು ಲಿಬ್ನೀ ಮತ್ತು ಶಿಮ್ಮೀ ಎಂಬವರು.</verse>
				<verse number="18">ಕೆಹಾತನ ಮಕ್ಕಳು - ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್. ಕೆಹಾತನು ನೂರ ಮೂವತ್ತ ಮೂರು ವರ್ಷ ಬದುಕಿದ್ದನು.</verse>
				<verse number="19">ಮೆರಾರೀಯ ಮಕ್ಕಳು - ಮಹ್ಲೀ, ಮೂಷೀ ಎಂಬವರು. ವಂಶಾವಳಿಗಳ ಪ್ರಕಾರ ಲೇವಿಯಿಂದುಂಟಾದ ಗೋತ್ರಗಳು ಇವೇ.</verse>
				<verse number="20">ಅಮ್ರಾಮನು ತನ್ನ ಸೋದರತ್ತೆಯಾದ ಯೋಕಬೆದಳನ್ನು ಮದುವೆಮಾಡಿಕೊಂಡನು. ಆಕೆ ಅವನಿಗೆ ಆರೋನನನ್ನು ಮತ್ತು ಮೋಶೆಯನ್ನು ಹೆತ್ತಳು. ಅಮ್ರಾಮನು ನೂರಮೂವತ್ತೇಳು ವರ್ಷ ಬದುಕಿದ್ದನು.</verse>
				<verse number="21">ಇಚ್ಹಾರನ ಮಕ್ಕಳು - ಕೋರಹ, ನೆಫೆಗೆ ಮತ್ತು ಜಿಕ್ರೀ.</verse>
				<verse number="22">ಉಜ್ಜೀಯೇಲನ ಮಕ್ಕಳು - ಮೀಷಾಯೇಲ್, ಎಲ್ಚಾಫಾನ್ ಸಿತ್ರೀ.</verse>
				<verse number="23">ಆರೋನನು ಅಮ್ಮೀನಾದಾಬನ ಮಗಳೂ ನಹಶೋನನ ತಂಗಿಯೂ ಆದ ಎಲೀಶೇಬಳನ್ನು ಮದುವೆಮಾಡಿಕೊಂಡನು. ಆಕೆಯಲ್ಲಿ ಅವನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರು ಹುಟ್ಟಿದರು.</verse>
				<verse number="24">ಕೋರಹನ ಮಕ್ಕಳು - ಅಸ್ಸೀರ್, ಎಲ್ಕಾನಾ ಮತ್ತು ಅಬಿಯಾಸಾಫ್. ಇವರೇ ಕೋರಹೀಯರ ಗೋತ್ರಸ್ಥಾಪಕರು.</verse>
				<verse number="25">ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆಮಾಡಿಕೊಂಡನು. ಆಕೆ ಅವನಿಗೆ ಫಿನೇಹಾಸನನ್ನು ಹೆತ್ತಳು. ಅವರವರ ಗೋತ್ರದ ಮೇರೆಗೆ ಇವರೇ ಲೇವಿಯರ ಪೂರ್ವಿಕರು.</verse>
				<verse number="26">“ತಮ್ಮ ತಮ್ಮ ಗೋತ್ರದ ಪ್ರಕಾರ ಇಸ್ರಯೇಲ್ ಜನರನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬರುವುದಕ್ಕೆ ಸರ್ವೇಶ್ವರನಿಂದ ಆಜ್ಞೆಹೊಂದಿದ ಆರೋನ್ ಮತ್ತು ಮೋಶೆ ಇವರೇ.</verse>
				<verse number="27">ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಹೊರಗೆ ಬರಮಾಡುವುದಕ್ಕಾಗಿ ಈಜಿಪ್ಟಿನ ಅರಸ ಫರೋಹನ ಸಂಗಡ ಮಾತಾಡಿದಂಥ ಮೋಶೆ ಮತ್ತು ಆರೋನರು ಇವರೇ.</verse>
				<verse number="28">ಸರ್ವೇಶ್ವರ ಸ್ವಾಮಿ ಈಜಿಪ್ಟ್ ದೇಶದಲ್ಲಿ ಮೋಶೆಯ ಸಂಗಡ ಮಾತಾಡಿ,</verse>
				<verse number="29">“ನಾನು ಸರ್ವೇಶ್ವರ; ನಾನು ನಿನಗೆ ಹೇಳುವುದನ್ನೆಲ್ಲ ನೀನು ಈಜಿಪ್ಟಿನ ಅರಸ ಫರೋಹನ ಸನ್ನಿಧಿಯಲ್ಲಿ ಹೇಳಬೇಕು,” ಎಂದರು.</verse>
				<verse number="30">ಅದಕ್ಕೆ ಮೋಶೆ, “ಸ್ವಾಮೀ, ನಾನು ಮಾತಾಡುವುದರಲ್ಲಿ ಜಾಣನಲ್ಲ, ಫರೋಹನು ನನ್ನ ಮಾತನ್ನು ಹೇಗೆ ಕೇಳುತ್ತಾನೆ?” ಎಂದನು.</verse>
			</chapter>
			<chapter number="7">
				<verse number="1">ಆಗ ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದರು. “ನೋಡು, ನಾನು ನಿನ್ನನ್ನು ಫರೋಹನ ಮುಂದೆ ದೇವರ ಪ್ರತಿನಿಧಿಯನ್ನಾಗಿ ನೇಮಿಸಿದ್ದೇನೆ. ನಿನ್ನ ಅಣ್ಣ ಆರೋನನು ನಿನ್ನ ಪರವಾಗಿ ವಾದಿಸುವನು.</verse>
				<verse number="2">ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ನೀನು ಹೇಳಬೇಕು. ಇಸ್ರಯೇಲರು ಈ ದೇಶದಿಂದ ಹೊರಟುಹೋಗುವುದಕ್ಕೆ ಅಪ್ಪಣೆಕೊಡಬೇಕೆಂದು ನಿನ್ನ ಅಣ್ಣ ಆರೋನನೇ ಫರೋಹನ ಮುಂದೆ ಮಾತಾಡಬೇಕು.</verse>
				<verse number="3">ಆದರೂ ನಾನು ಫರೋಹನ ಹೃದಯವನ್ನು ಕಲ್ಲಾಗಿಸಿ ಈಜಿಪ್ಟ್ ದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಪವಾಡಗಳನ್ನೂ ನಡೆಸಿ ನನ್ನ ಶಕ್ತಿಯನ್ನು ತೋರಿಸುವೆನು.</verse>
				<verse number="4">ಫರೋಹನು ನಿನ್ನ ಮಾತನ್ನು ಕೇಳುವುದಿಲ್ಲ. ಆಗ ನಾನು ಈಜಿಪ್ಟ್ ದೇಶದವರನ್ನು ಬಾಧಿಸಿ ಅವರಿಗೆ ಕಠಿಣ ಶಿಕ್ಷೆಗಳನ್ನು ವಿಧಿಸುವೆನು. ನನ್ನ ಜನರಾದ ಇಸ್ರಯೇಲರ ಗೋತ್ರಗಳನ್ನೆಲ್ಲ ಈಜಿಪ್ಟ್ ದೇಶದಿಂದ ಹೊರತರುವೆನು.</verse>
				<verse number="5">ನಾನು ಈಜಿಪ್ಟಿನವರಿಗೆ ವಿರುದ್ಧ ಕೈಯೆತ್ತಿ ಅವರ ಮಧ್ಯೆಯಿಂದ ಇಸ್ರಯೇಲರನ್ನು ಹೊರತಂದಾಗ ನಾನು ಸರ್ವೇಶ್ವರನೆಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು.</verse>
				<verse number="6">ಸರ್ವೇಶ್ವರ ಸ್ವಾಮಿಯ ಆಜ್ಞೆಯಂತೆಯೇ ಮೋಶೆ ಮತ್ತು ಆರೋನರು ಮಾಡಿದರು.</verse>
				<verse number="7">ಫರೋಹನೊಡನೆ ಮಾತುಕತೆ ನಡೆಸಿದಾಗ ಮೋಶೆಗೆ ಎಂಬತ್ತು, ಆರೋನನಿಗೆ ಎಂಬತ್ತಮೂರು ವರ್ಷ ವಯಸ್ಸಾಗಿತ್ತು.</verse>
				<verse number="8">ಮೋಶೆ ಮತ್ತು ಆರೋನರ ಸಂಗಡ ಸರ್ವೇಶ್ವರ ಮಾತಾಡಿ,</verse>
				<verse number="9">\ಫರೋಹನು ನಿಮಗೆ, ‘ನಾನು ನಿಮ್ಮ ಮಾತನ್ನು ನಂಬಬೇಕಾದರೆ ಮಹತ್ಕಾರ್ಯವೊಂದನ್ನು ನನ್ನ ಮುಂದೆ ಮಾಡಿ,’ ಎಂದು ಹೇಳಿದರೆ ಮೋಶೆ ಆರೋನನಿಗೆ, ‘ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದ ಮೇಲೆ ಬಿಸಾಡು’ ಎಂದು ಹೇಳಲಿ. ಅದು ಸರ್ಪವಾಗುವುದು,” ಎಂದು ಹೇಳಿದರು.</verse>
				<verse number="10">ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋದರು. ಸರ್ವೇಶ್ವರ ತಮಗೆ ಹೇಳಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ನೆಲದಲ್ಲಿ ಬಿಸಾಡಿದಾಗ ಅದು ಸರ್ಪ ಆಯಿತು.</verse>
				<verse number="11">ಫರೋಹನು ಈಜಿಪ್ಟ್ ದೇಶದ ವಿದ್ವಾಂಸರನ್ನೂ ಮಂತ್ರಗಾರರನ್ನೂ ಕರೆಸಿದನು. ಆ ಮಾಟಗಾರರು ತಮ್ಮ ಮಂತ್ರತಂತ್ರಗಳಿಂದ ಅದೇ ರೀತಿಯಾಗಿ ಮಾಡಿದರು.</verse>
				<verse number="12">ಅವರು ತಮ್ಮ ತಮ್ಮ ಕೋಲುಗಳನ್ನು ನೆಲಕ್ಕೆ ಬಿಸಾಡಿದರು. ಅವೂ ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು.</verse>
				<verse number="13">ಸರ್ವೇಶ್ವರ ಈ ಮೊದಲೇ ಹೇಳಿದ್ದಂತೆ ಫರೋಹನ ಹೃದಯ ಕಲ್ಲಾಯಿತು. ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.</verse>
				<verse number="14">ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದರು: “ಫರೋಹನ ಹೃದಯ ಮೊಂಡಾಗಿದೆ. ಜನರು ಹೋಗಲು ಅಪ್ಪಣೆ ಕೊಡುವುದಿಲ್ಲವೆನ್ನುತ್ತಾನೆ.</verse>
				<verse number="15">ಬೆಳಿಗ್ಗೆ ನೀನು ಫರೋಹನ ಬಳಿಗೆ ಹೋಗು. ಆಗ ಅವನು ನದಿಗೆ ಹೋಗುತ್ತಿರುತ್ತಾನೆ. ಅವನನ್ನು ಭೇಟಿಯಾಗಲು ನೈಲ್ ನದಿ ತೀರದಲ್ಲೆ ನಿಂತುಕೊಂಡಿರು. ಸರ್ಪವಾಗಿ ಮಾರ್ಪಟ್ಟ ಆ ಕೋಲು ನಿನ್ನ ಕೈಯಲ್ಲಿರಲಿ.</verse>
				<verse number="16">ಅವನಿಗೆ “ಹಿಬ್ರಿಯರ ದೇವರಾದ ಸರ್ವೇಶ್ವರ ನನ್ನನ್ನು ನಿನ್ನ ಬಳಿಗೆ ಕಳಿಸಿದ್ದಾರೆ. ಅವರು ನಿನಗೆ ಹೇಳುವ ಮಾತಿದು: ಮರುಭೂಮಿಯಲ್ಲಿ ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆ ಕೊಡಬೇಕೆಂದು ನಿನಗೆ ಆಜ್ಞಾಪಿಸಿದೆ. ಆದರೆ ನೀನು ಈವರೆಗೂ ಅದನ್ನು ಲಕ್ಷ್ಯಕ್ಕೆ ತಂದುಕೊಂಡಿಲ್ಲ.</verse>
				<verse number="17">ಆದುದರಿಂದ ಸರ್ವೇಶ್ವರನಾದ ನಾನು ಮತ್ತೆ ಹೇಳುತ್ತೇನೆ - ನೀನು ನನ್ನನ್ನು ಸರ್ವೇಶ್ವರನೆಂದು ತಿಳಿದುಕೊಳ್ಳುವಂತೆ ನನ್ನ ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡಿಸುವೆನು; ಆಗ ಅದು ರಕ್ತವಾಗುವುದು.</verse>
				<verse number="18">ನದಿಯಲ್ಲಿರುವ ಮೀನುಗಳು ಸಾಯುವುವು. ನದಿಯು ಹೊಲಸಾಗಿ ನಾರುವುದು. ಅದರಲ್ಲಿ ನೀರನ್ನು ಕುಡಿಯಲು ಈಜಿಪ್ಟಿನವರಿಗೆ ಹೇಸಿಗೆಯಾಗುವುದು'.”</verse>
				<verse number="19">ಸರ್ವೇಶ್ವರ ಮತ್ತೆ ಮೋಶೆಗೆ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ತೆಗೆದುಕೊಂಡು ಈಜಿಪ್ಟ್ ದೇಶದಲ್ಲಿರುವ ಹೊಳೆ, ಕಾಲುವೆ, ಕೆರೆ, ಕೊಳ ಮೊದಲಾದ ನೀರಿರುವ ಎಲ್ಲ ಸ್ಥಳಗಳ ಮೇಲೆ ಅದನ್ನು ಚಾಚು’ ಎಂದು ಹೇಳು. ಅವನು ಚಾಚುವಾಗ ಆ ನೀರೆಲ್ಲ ರಕ್ತವಾಗುವುದು. ಈಜಿಪ್ಟ್ ದೇಶದಲ್ಲೆಲ್ಲೂ ಮರದ ತೊಟ್ಟಿಗಳಲ್ಲೂ ಕಲ್ಲಿನ ಬಾನೆಗಳಲ್ಲೂ ಕೂಡ ರಕ್ತ ತುಂಬಿರುವುದು.”</verse>
				<verse number="20">ಮೋಶೆ ಮತ್ತು ಆರೋನರು ಸರ್ವೇಶ್ವರ ಸ್ವಾಮಿ ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಫರೋಹನ ಹಾಗು ಅವನ ಪರಿವಾರದ ಮುಂದೆ ಆರೋನನು ಕೋಲನ್ನು ಎತ್ತಿ ನದಿಯಲ್ಲಿರುವ ನೀರನ್ನು ಹೊಡೆದನು. ಅದೆಲ್ಲ ರಕ್ತಮಯ ಆಯಿತು.</verse>
				<verse number="21">ಅದರಲ್ಲಿದ್ದ ಮೀನುಗಳು ಸತ್ತುಹೋದವು. ನದಿ ಹೊಲಸಾಗಿ ನಾರುತ್ತಿತ್ತು. ಈಜಿಪ್ಟಿನವರು ಅದರ ನೀರನ್ನು ಕುಡಿಯಲಾರದೆ ಹೋದರು. ಈಜಿಪ್ಟ್ ದೇಶವೆಲ್ಲಾ ರಕ್ತಮಯ ಆಯಿತು.</verse>
				<verse number="22">ಆದರೆ ಈಜಿಪ್ಟ್ ದೇಶದ ಮಾಟಗಾರರು ಕೂಡ ತಮ್ಮ ಮಂತ್ರತಂತ್ರಗಳಿಂದ ಅದೇ ರೀತಿ ಮಾಡಿದರು. ಆದ್ದರಿಂದ ಫರೋಹನ ಹೃದಯ ಕಠಿಣವಾಯಿತು. ಸರ್ವೇಶ್ವರ ಈ ಮೊದಲೇ ತಿಳಿಸಿದ್ದಂತೆ ಅವನು ಮೋಶೆ ಮತ್ತು ಆರೋನರ ಮಾತನ್ನು ಕೇಳದೆಹೋದನು.</verse>
				<verse number="23">ಈ ಸೂಚಕಕಾರ್ಯವನ್ನು ಕೂಡ ಗಣನೆಗೆ ತೆಗೆದುಕೊಳ್ಳದೆ ಫರೋಹನು ತನ್ನ ಅರಮನೆಗೆ ಹಿಂದಿರುಗಿದನು.</verse>
				<verse number="24">ಈಜಿಪ್ಟಿನವರೆಲ್ಲರು ಆ ನದಿಯ ನೀರನ್ನು ಕುಡಿಯಲಾಗದೆ, ಕುಡಿಯುವ ನೀರಿಗಾಗಿ ಅದರ ಸುತ್ತಲು ಅಗೆದರು.</verse>
				<verse number="25">ಸರ್ವೇಶ್ವರ ನೈಲ್ ನದಿಯನ್ನು ಹೊಡೆದ ಮೇಲೆ ಏಳು ದಿನಗಳು ಕಳೆದವು.</verse>
			</chapter>
			<chapter number="8">
				<verse number="1">ತರುವಾಯ ಸರ್ವೇಶ್ವರ ಸ್ವಾಮಿ ಮೋಶೆಗೆ ಇಂತೆಂದರು: “ನೀನು ಫರೋಹನ ಬಳಿಗೆ ಹೋಗಿ ಹೀಗೆಂದು ಹೇಳು - ‘ಸರ್ವೇಶ್ವರ ನಿನಗೆ ಮಾಡುವ ಆಜ್ಞೆ ಇದು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಹೋಗಲು ಅಪ್ಪಣೆ ಕೊಡು.</verse>
				<verse number="2">ಕೊಡದೆ ಹೋದರೆ ನಿನ್ನ ದೇಶಕ್ಕೆಲ್ಲಾ ಕಪ್ಪೆಗಳ ಕಾಟ ತಗಲುವಂತೆ ಮಾಡುವೆನು.</verse>
				<verse number="3">ನೈಲ್ ನದಿಯಲ್ಲಿ ಕಪ್ಪೆಗಳು ತುಂಬಿಹೋಗುವುವು. ಅವು ಹೊರಟುಬಂದು ನಿನ್ನ ಅರಮನೆಯಲ್ಲೂ ಮಲಗುವ ಕೋಣೆಯಲ್ಲೂ ನಿನ್ನ ಹಾಸಿಗೆಯಲ್ಲೂ ನಿನ್ನ ಪರಿವಾರದವರ ಹಾಗು ಪ್ರಜೆಗಳ ಮನೆಗಳಲ್ಲೂ ಒಲೆಗಳಲ್ಲೂ ಹಿಟ್ಟುನಾದುವ ಹರಿವಾಣಗಳಲ್ಲೂ ಕಾಣಿಸಿಕೊಳ್ಳುವುವು.</verse>
				<verse number="4">ನಿನ್ನ ಮೇಲೆ, ನಿನ್ನ ಪ್ರಜೆಗಳ ಮೇಲೆ ಹಾಗೂ ಪರಿವಾರದವರ ಮೇಲೆ ಆ ಕಪ್ಪೆಗಳು ಏರಿ ಬರುವುವು'.”</verse>
				<verse number="5">ಸರ್ವೇಶ್ವರ, ಮೋಶೆಯ ಸಂಗಡ ಮಾತಾಡಿ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ಕಾಲುವೆ, ಹೊಳೆ, ಕೆರೆ ಇವುಗಳ ಮೇಲೆ ಚಾಚು. ಆಗ ಈಜಿಪ್ಟ್ ದೇಶದ ಮೇಲೆಲ್ಲಾ ಕಪ್ಪೆಗಳು ಏರಿಬರುವುವು, ಎಂದು ಹೇಳು.”</verse>
				<verse number="6">ಆರೋನನು ಈಜಿಪ್ಟ್ ದೇಶದಲ್ಲಿ ನೀರಿರುವ ಎಲ್ಲ ಸ್ಥಳಗಳ ಮೇಲೆ ಕೈಚಾಚಲು ಕಪ್ಪೆಗಳು ಹೊರಟುಬಂದು ದೇಶವನ್ನೆಲ್ಲಾ ತುಂಬಿಕೊಂಡವು.</verse>
				<verse number="7">ಮಾಟಗಾರರು ತಮ್ಮ ಮಂತ್ರತಂತ್ರಗಳಿಂದ ಹಾಗೆಯೇ ಮಾಡಿ ಈಜಿಪ್ಟ್ ದೇಶದ ಮೇಲೆ ಕಪ್ಪೆಗಳನ್ನು ಬರಮಾಡಿದರು.</verse>
				<verse number="8">ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, “ನೀವು ಸರ್ವೇಶ್ವರನನ್ನು ಪ್ರಾರ್ಥನೆಮಾಡಿ ಈ ಕಪ್ಪೆಗಳನ್ನು ನನ್ನ ಬಳಿಯಿಂದಲೂ ನನ್ನ ಪ್ರಜೆಗಳ ಬಳಿಯಿಂದಲೂ ತೊಲಗಿಸಿರಿ. ಹಾಗೆ ಮಾಡಿದರೆ ಸರ್ವೇಶ್ವರನಿಗೆ ಬಲಿ ಒಪ್ಪಿಸುವಂತೆ ನಿಮ್ಮ ಜನರಿಗೆ ನಾನು ಹೋಗಲು ಅಪ್ಪಣೆ ಕೊಡುತ್ತೇನೆ,” ಎಂದನು.</verse>
				<verse number="9">ಅದಕ್ಕೆ ಮೋಶೆ, \ಈ ಕಪ್ಪೆಗಳು ತಮ್ಮ ಬಳಿಯಿಂದಲೂ ತಮ್ಮ ಮನೆ ಮಾರುಗಳಿಂದಲೂ ತೊಲಗಿಹೋಗಿ ನದಿಯಲ್ಲಿ ಮಾತ್ರ ಉಳಿಯುವಂತೆ ನಾನು ಯಾವಾಗ ತಮ್ಮ ಪರವಾಗಿ, ತಮ್ಮ ಪ್ರಜಾಪರಿವಾರದ ಪರವಾಗಿ ಪ್ರಾರ್ಥನೆ ಸಲ್ಲಿಸಬೇಕು? ತಮ್ಮ ಘನಚಿತ್ತಕ್ಕೆ ಸರಿತೋರಿದಂತೆ ತಾವೇ ಅದಕ್ಕೊಂದು ಕಾಲವನ್ನು ನಿಗದಿಮಾಡಬೇಕು,” ಎಂದು ಫರೋಹನನ್ನು ವಿನಂತಿಸಿದನು.</verse>
				<verse number="10">ಅವನು, “ನಾಳೆಯೇ ಆಗಲಿ” ಎಂದನು. ಅದಕ್ಕೆ ಮೋಶೆ, “ತಮ್ಮ ಮಾತಿನ ಪ್ರಕಾರವೇ ಆಗುವುದು.</verse>
				<verse number="11">ಕಪ್ಪೆಗಳು ತಮ್ಮನ್ನೂ ತಮ್ಮ ಮನೆಮಾರುಗಳನ್ನೂ ತಮ್ಮ ಪ್ರಜಾಪರಿವಾರಗಳನ್ನೂ ಬಿಟ್ಟು ನದಿಯಲ್ಲಿ ಮಾತ್ರ ಇರುವುವು. ಇದರಿಂದ ನಮ್ಮ ದೇವರಾದ ಸರ್ವೇಶ್ವರನಿಗೆ ಸಮಾನರು ಯಾರೂ ಇಲ್ಲವೆಂದು ತಾವೇ ತಿಳಿದುಕೊಳ್ಳುವಿರಿ,” ಎಂದನು.</verse>
				<verse number="12">ಮೋಶೆ ಮತ್ತು ಆರೋನರು ಫರೋಹನ ಬಳಿಯಿಂದ ಹೊರಟುಹೋದರು. ಫರೋಹನ ಮೇಲೆ ಬರಮಾಡಿದ್ದ ಕಪ್ಪೆಗಳ ಕಾಟವನ್ನು ತೊಲಗಿಸಬೇಕೆಂದು ಮೋಶೆ ಪ್ರಾರ್ಥನೆ ಮಾಡಿದನು.</verse>
				<verse number="13">ಸರ್ವೇಶ್ವರ ಅವನ ಪ್ರಾರ್ಥನೆಯ ಪ್ರಕಾರವೇ ಮಾಡಿದರು. ಮನೆಗಳಲ್ಲೂ ಅಂಗಳಗಳಲ್ಲೂ ಹೊಲಗದ್ದೆಗಳಲ್ಲೂ ಇದ್ದ ಕಪ್ಪೆಗಳು ಸತ್ತುಹೋದವು.</verse>
				<verse number="14">ಜನರು ಅವುಗಳನ್ನು ರಾಶಿರಾಶಿಯಾಗಿ ಕೂಡಿಸಿದರು. ದೇಶವೆಲ್ಲ ದುರ್ವಾಸನೆಯಿಂದ ತುಂಬಿಹೋಯಿತು.</verse>
				<verse number="15">ಕಾಟ ತೀರಿತೆಂದು ತಿಳಿದುಕೊಂಡಾಗ ಫರೋಹನು ತನ್ನ ಹೃದಯವನ್ನು ಮೊಂಡಾಗಿಸಿಕೊಂಡನು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.</verse>
				<verse number="16">ಬಳಿಕ ಸರ್ವೇಶ್ವರ ಮೋಶೆಯ ಸಂಗಡ ಮಾತಾಡಿ ಹೀಗೆಂದರು: “ನೀನು ಆರೋನನಿಗೆ, ‘ನಿನ್ನ ಕೋಲನ್ನು ಚಾಚಿ ನೆಲದ ಧೂಳನ್ನು ಹೊಡೆ. ಆಗ ಈಜಿಪ್ಟಿನ ದೇಶದಲ್ಲೆಲ್ಲ ನೆಲದ ಧೂಳು ಹೇನುಗಳಾಗುವುದು' ಎಂದು ಹೇಳು.”</verse>
				<verse number="17">ಅವರು ಹಾಗೆಯೆ ಮಾಡಿದರು. ಆರೋನನು ಕೋಲನ್ನು ಹಿಡಿದು ಕೈಚಾಚಿ ಧೂಳನ್ನು ಹೊಡೆದನು. ಹೇನುಗಳು ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಮುತ್ತಿಕೊಂಡವು. ಈಜಿಪ್ಟ್ ದೇಶದಲ್ಲೆಲ್ಲಾ ನೆಲದ ಧೂಳು ಹೇನುಗಳಾದವು.</verse>
				<verse number="18">ಮಾಟಗಾರರು ತಮ್ಮ ತಂತ್ರ ಮಂತ್ರಗಳಿಂದ ಹಾಗೆಯೇ ಹೇನುಗಳನ್ನು ಉಂಟುಮಾಡಲು ಪ್ರಯತ್ನಿಸಿದರು. ಆದರೆ ಸಾಧ್ಯವಾಗಲಿಲ್ಲ. ಆ ಹೇನುಗಳು ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಮುತ್ತಿದ್ದವು.</verse>
				<verse number="19">ಆಗ ಆ ಮಾಟಗಾರರು, “ಇದು ದೇವರ ಕೆಲಸವೇ ಸರಿ,” ಎಂದು ಫರೋಹನಿಗೆ ತಿಳಿಸಿದರು. ಆದರೂ ಫರೋಹನ ಹೃದಯ ಕಲ್ಲಾಗಿತ್ತು. ಸರ್ವೇಶ್ವರ ಮುಂತಿಳಿಸಿದಂತೆಯೇ ಅವನು ಅವರ ಮಾತನ್ನು ಕೇಳದೆಹೋದನು.</verse>
				<verse number="20">ತರುವಾಯ ಸರ್ವೇಶ್ವರ ಮೋಶೆಗೆ ಇಂತೆಂದರು: “ನೀನು ಬೆಳಿಗ್ಗೆ ಎದ್ದು ಫರೋಹನಿಗಾಗಿ ಕಾದು ನಿಂತುಕೊ. ಅವನು ನದಿಗೆ ಹೋಗಲು ಬರುತ್ತಾನೆ. ಅವನಿಗೆ ಹೀಗೆಂದು ಹೇಳು: ‘ಸರ್ವೇಶ್ವರ ನಿಮಗೆ ಆಜ್ಞಾಪಿಸುವ ಮಾತುಗಳಿವು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆಕೊಡು.</verse>
				<verse number="21">ಕೊಡದೆ ಹೋದರೆ ನಿನಗೂ ನಿನ್ನ ಪ್ರಜಾಪರಿವಾರದವರಿಗೂ ನಿನ್ನ ಮನೆಮಾರುಗಳಿಗೂ ನೊಣಗಳ ಕಾಟವನ್ನು ಉಂಟುಮಾಡುವೆನು. ಈಜಿಪ್ಟಿನವರು ವಾಸಿಸುವ ಮನೆಗಳಲ್ಲೂ ಅವರು ಕಾಲೂರುವ ನೆಲಗಳಲ್ಲೂ ಆ ನೊಣಗಳು ತುಂಬಿಕೊಳ್ಳುವುವು.</verse>
				<verse number="22">ಆ ದಿನದಲ್ಲಿ ನನ್ನ ಜನರು ವಾಸವಾಗಿರುವ ಗೋಷೆನ್ ಪ್ರಾಂತ್ಯಕ್ಕೆ ಈ ಪಿಡುಗು ತಗಲದಂತೆ ಮಾಡುವೆನು. ಅಲ್ಲಿ ಈ ಕಾಟ ಇರುವುದಿಲ್ಲ. ಇದರಿಂದ ಭೂಲೋಕವನ್ನಾಳುವ ಸರ್ವೇಶ್ವರನು ನಾನೇ ಎಂದು ನೀನು ಅರಿತುಕೊಳ್ಳಬೇಕು.</verse>
				<verse number="23">ಹೀಗೆ ನನ್ನ ಜನರಿಗೂ ನಿನ್ನ ಜನರಿಗೂ ವ್ಯತ್ಯಾಸ ಉಂಟುಮಾಡುವೆನು. ನಾಳೆಯೇ ಈ ಸೂಚಕಕಾರ್ಯ ನಡೆಯುವುದು, ಎಂದು ಹೇಳು.\</verse>
				<verse number="24">ಸರ್ವೇಶ್ವರ ಹಾಗೆಯೇ ಮಾಡಿದರು. ನೊಣಗಳು ಫರೋಹನ ಅರಮನೆಯಲ್ಲೂ ಅವನ ಪರಿವಾರದವರ ಮನೆಗಳಲ್ಲೂ ಸಮಸ್ತ ಈಜಿಪ್ಟ್ ದೇಶದಲ್ಲೂ ಬಹಳವಾಗಿ ತುಂಬಿಕೊಂಡವು. ಅವುಗಳಿಂದ ದೇಶ ಹಾಳಾಯಿತು.</verse>
				<verse number="25">ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಸಿ, “ನೀವು ಹೋಗಿ ಈ ದೇಶದಲ್ಲೇ ನಿಮ್ಮ ದೇವರಿಗೆ ಬಲಿಯನ್ನೊಪ್ಪಿಸಬಹುದು,” ಎಂದನು.</verse>
				<verse number="26">ಆದರೆ ಮೋಶೆ, “ಹಾಗೆ ಮಾಡುವುದು ಸರಿಯಲ್ಲ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಬಲಿಯಾಗಿ ಕೊಡುವ ಆಹುತಿ ಈಜಿಪ್ಟಿನವರಿಗೆ ನಿಷಿದ್ಧವಾದದ್ದು. ನಿಷಿದ್ಧವೆಂದು ಈಜಿಪ್ಟಿನವರು ತಿಳಿದುಕೊಂಡು ಇರುವ ಆಹುತಿಯನ್ನು ನಾವು ಅವರ ಕಣ್ಮುಂದೆಯೇ ಮಾಡಿದರೆ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರಲ್ಲವೆ?</verse>
				<verse number="27">ನಾವು ಮರುಭೂಮಿಯಲ್ಲಿ ಮೂರು ದಿವಸದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸುವ ಪ್ರಕಾರ ಬಲಿಯೊಪ್ಪಿಸಬೇಕಾಗಿದೆ’.\ ಎಂದನು.</verse>
				<verse number="28">ಅದಕ್ಕೆ ಫರೋಹನು, “ಒಳ್ಳೆಯದು, ಮರುಭೂಮಿಯಲ್ಲಿ ನಿಮ್ಮ ದೇವರಾದ ಸರ್ವೇಶ್ವರನಿಗೆ ಬಲಿ ಒಪ್ಪಿಸಲು ನಿಮಗೆ ಅಪ್ಪಣೆಕೊಡುತ್ತೇನೆ. ಆದರೆ ದೂರ ಹೋಗಕೂಡದು. ನನಗಾಗಿ ಪ್ರಾರ್ಥನೆ ಮಾಡಬೇಕು,” ಎಂದನು.</verse>
				<verse number="29">ಆಗ ಮೋಶೆ, “ನಿಮ್ಮ ಬಳಿಯಿಂದ ಹೊರಟಾಗಲೆ ಫರೋಹನಾದ ನಿಮಗೂ ನಿಮ್ಮ ಪ್ರಜಾಪರಿವಾರದವರಿಗೂ ನೊಣಗಳ ಕಾಟ ನಾಳೆಯಿಂದ ಇರಬಾರದೆಂದು ಸರ್ವೇಶ್ವರನಿಗೆ ಪ್ರಾರ್ಥನೆ ಮಾಡುತ್ತೇನೆ. ಆದರೆ ಸರ್ವೇಶ್ವರನಿಗೆ ಬಲಿ ಒಪ್ಪಿಸಲು ನೀವು ಜನರಿಗೆ ಅಪ್ಪಣೆಕೊಡದೆ ವಂಚನೆ ಮಾಡಬಾರದು,” ಎಂದನು.</verse>
				<verse number="30">ಮೋಶೆ ಫರೋಹನ ಬಳಿಯಿಂದ ಹೊರಟು ಸರ್ವೇಶ್ವರ ಸ್ವಾಮಿಗೆ ಪ್ರಾರ್ಥನೆ ಮಾಡಿದನು.</verse>
				<verse number="31">ಅವನ ಪ್ರಾರ್ಥನೆಯ ಮೇರೆಗೆ ಸರ್ವೇಶ್ವರ ಮಾಡಿದರು. ಆ ನೊಣಗಳೆಲ್ಲ ಫರೋಹನ ಹಾಗು ಅವನ ಪ್ರಜಾಪರಿವಾರದವರ ಬಳಿಯಿಂದ ತೊಲಗಿಹೋದವು. ಒಂದೂ ಉಳಿಯಲಿಲ್ಲ.</verse>
				<verse number="32">ಆದರೂ ಫರೋಹನು ಮತ್ತೆ ತನ್ನ ಹೃದಯವನ್ನು ಮೊಂಡುಮಾಡಿಕೊಂಡು ಜನರಿಗೆ ಹೋಗಲು ಅಪ್ಪಣೆಕೊಡದೆ ಹೋದನು.</verse>
			</chapter>
			<chapter number="9">
				<verse number="1">ಅನಂತರ ಸರ್ವೇಶ್ವರ, ಮೋಶೆಗೆ ಹೇಳಿದ್ದೇನೆಂದರೆ: “ನೀನು ಫರೋಹನ ಬಳಿಗೆ ಹೋಗಿ ಹೀಗೆಂದು ಹೇಳು: ‘ಹಿಬ್ರಿಯರ ದೇವರಾದ ಸರ್ವೇಶ್ವರನು ತನ್ನನ್ನು ಆರಾಧಿಸಲು ತನ್ನ ಜನರಿಗೆ ನಿಮ್ಮಿಂದ ಹೋಗಲು ಅಪ್ಪಣೆಯಾಗಬೇಕೆಂದು ಹೇಳಿದ್ದರು.</verse>
				<verse number="2">ನೀನು ಅವರಿಗೆ ಅಪ್ಪಣೆಕೊಡದೆ ಇನ್ನೂ ಅವರನ್ನು ತಡೆದೆಯಾದರೆ,</verse>
				<verse number="3">ಸರ್ವೇಶ್ವರನು ನಾಡಿನಲ್ಲಿರುವ ನಿನ್ನ ಎಲ್ಲ ಕುದುರೆ, ಕತ್ತೆ, ಒಂಟೆ, ದನ, ಕುರಿ, ಆಡು ಇವೆಲ್ಲ ಪ್ರಾಣಿಗಳ ಮೇಲೆ ಕೈಯೆತ್ತಿ ದೊಡ್ಡರೋಗ ಬರುವಂತೆ ಮಾಡುವರೆಂದು ತಿಳಿದುಕೊ.</verse>
				<verse number="4">ಇಸ್ರಯೇಲರ ಪಶುಪ್ರಾಣಿಗಳಿಗೂ ಈಜಿಪ್ಟಿನವರ ಪಶುಪ್ರಾಣಿಗಳಿಗೂ ಆತನು ವ್ಯತ್ಯಾಸಮಾಡುವನು. ಇಸ್ರಯೇಲರ ಪಶುಪ್ರಾಣಿಗಳಲ್ಲಿ ಒಂದೂ ಸಾಯುವುದಿಲ್ಲವೆಂದು ಹೇಳು.</verse>
				<verse number="5">ಇದಕ್ಕೆ ಕಾಲವನ್ನೂ ಆತ ನಿಗದಿ ಮಾಡಿದ್ದಾರೆ; ನಾಳೆಯೇ ಈ ಕಾರ್ಯವನ್ನು ನಡೆಸುವರು,’ ಎಂದು ಹೇಳು.”</verse>
				<verse number="6">ಮಾರನೆಯ ದಿನವೇ ಸರ್ವೇಶ್ವರ ಈ ಕಾರ್ಯವನ್ನು ನೆರವೇರಿಸಿದರು. ಈಜಿಪ್ಟಿನವರ ಪಶುಪ್ರಾಣಿಗಳೆಲ್ಲಾ ಸಾಯುತ್ತಾ ಬಂದವು. ಇಸ್ರಯೇಲರ ಪಶುಪ್ರಾಣಿಗಳಲ್ಲಿ ಒಂದೂ ಸಾಯಲಿಲ್ಲ.</verse>
				<verse number="7">ಫರೋಹನು ಆಳುಗಳನ್ನು ಕಳುಹಿಸಿ ವಿಚಾರಿಸಿದನು. ಇಸ್ರಯೇಲರ ಪಶುಪ್ರಾಣಿಗಳಲ್ಲಿ ಒಂದೂ ಸಾಯಲಿಲ್ಲವೆಂದು ತಿಳಿದುಬಂದಿತು. ಆದರೂ ಕೂಡ ಫರೋಹನ ಹೃದಯ ಕಠಿಣವಾಯಿತು. ಆ ಜನರಿಗೆ ಹೊರಡಲಿಕ್ಕೆ ಅವನು ಅಪ್ಪಣೆ ಕೊಡದೆಹೋದನು.</verse>
				<verse number="8">ಸರ್ವೇಶ್ವರ, ಮೋಶೆ ಮತ್ತು ಆರೋನರಿಗೆ, “ನೀವು ಆವಿಗೆಯ ಬೂದಿಯನ್ನು ಕೈ ತುಂಬ ತೆಗೆದುಕೊಳ್ಳಿ. ಮೋಶೆ ಅದನ್ನು ಫರೋಹನ ಕಣ್ಮುಂದೆ ಆಕಾಶಕ್ಕೆ ತೂರಲಿ.</verse>
				<verse number="9">ಅದು ಪುಡಿಪುಡಿಯಾಗಿ ಈಜಿಪ್ಟ್ ದೇಶದಲ್ಲೆಲ್ಲಾ ಹಬ್ಬಿ ಮನುಷ್ಯರಲ್ಲೂ ಪಶುಪ್ರಾಣಿಗಳಲ್ಲೂ ಕುರುಗಳನ್ನೆಬ್ಬಿಸಿ ಒಡೆದು ಹುಣ್ಣಾಗುವಂತೆ ಮಾಡುವುದು,” ಎಂದು ಹೇಳಿದರು.</verse>
				<verse number="10">ಮೋಶೆ ಮತ್ತು ಆರೋನರು ಆವಿಗೆಯ ಬೂದಿಯನ್ನು ತೆಗೆದುಕೊಂಡು ಫರೋಹನ ಮುಂದೆ ನಿಂತುಕೊಂಡರು. ಮೋಶೆ ಆ ಬೂದಿಯನ್ನು ಆಕಾಶಕ್ಕೆ ತೂರಿದನು. ಅದು ಮನುಷ್ಯರಲ್ಲೂ ಪಶುಪ್ರಾಣಿಗಳಲ್ಲೂ ಕುರುಗಳನ್ನೆಬ್ಬಿಸಿ ಒಡೆದು ಹುಣ್ಣಾಗುವಂತೆ ಮಾಡಿತು.</verse>
				<verse number="11">ಆ ಹುಣ್ಣುಗಳು ಮಂತ್ರವಾದಿಗಳಲ್ಲೂ ಈಜಿಪ್ಟಿನವರೆಲ್ಲರಲ್ಲೂ ಇದ್ದುದರಿಂದ ಆ ಮಂತ್ರವಾದಿಗಳು ಹುಣ್ಣುಗಳ ನಿಮಿತ್ತ ಮೋಶೆಯ ಮುಂದೆ ನಿಲ್ಲಲಾರದೆ ಹೋದರು.</verse>
				<verse number="12">ಆದರೂ ಸರ್ವೇಶ್ವರ, ಮೋಶೆಗೆ ಮುಂತಿಳಿಸಿದಂತೆಯೇ ಆಯಿತು. ಸರ್ವೇಶ್ವರ ಫರೋಹನ ಹೃದಯವನ್ನು ಕಠಿಣಗೊಳಿಸಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.</verse>
				<verse number="13">ಬಳಿಕ ಸರ್ವೇಶ್ವರ ಮೋಶೆಗೆ ಇಂತೆಂದರು: “ನೀನು ಬೆಳಿಗ್ಗೆ ಎದ್ದು ಹೋಗಿ ಫರೋಹನ ಮುಂದೆ ನಿಂತುಕೊಂಡು ಹೀಗೆನ್ನಬೇಕು: ‘ಹಿಬ್ರಿಯರ ದೇವರಾದ ಸರ್ವೇಶ್ವರ ನಿನಗೆ ಮಾಡುವ ಆಜ್ಞೆ ಇದು - ನನ್ನನ್ನು ಆರಾಧಿಸಲು ನನ್ನ ಜನರಿಗೆ ಅಪ್ಪಣೆಕೊಡಬೇಕು.</verse>
				<verse number="14">ಇಲ್ಲವಾದರೆ ಈ ಸಾರಿ ವಿಧಿಸುವ ಈ ಬಾಧೆಗಳು ನಿನ್ನ ಪ್ರಜಾಪರಿವಾರದವರಿಗೆ ಮಾತ್ರವಲ್ಲ ನಿನಗೂ ತಗಲುವುದು. ಇದರಿಂದ ಇಡೀ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವೆ.</verse>
				<verse number="15">ನಾನು ಕೈಯೆತ್ತಿ ನಿನ್ನನ್ನೂ ನಿನ್ನ ಪ್ರಜೆಗಳನ್ನೂ ಅಂಟುರೋಗದಿಂದ ಸಾಯಿಸಬಹುದಾಗಿತ್ತು. ಆಗ ನೀನು ಈವರೆಗೆ ಭೂಮಿಯಲ್ಲಿ ಇರದಂತೆ ನಿರ್ಮೂಲವಾಗುತ್ತಿದ್ದೆ.</verse>
				<verse number="16">ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೆ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.</verse>
				<verse number="17">ನೀನು ನನ್ನ ಜನರನ್ನು ಇನ್ನೂ ಹೋಗಗೊಡಿಸದೆ ಅವರ ಮುಂದೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯೋ?</verse>
				<verse number="18">ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಈಜಿಪ್ಟಿನ ರಾಜ್ಯ ಸ್ಥಾಪಿತವಾಗಿ ಇಂದಿನವರೆಗೂ ಬೀಳದಂಥ ಕಲ್ಲಿನ ಮಳೆ ಬೀಳುವುದು.</verse>
				<verse number="19">ಆದಕಾರಣ ಆಳುಗಳನ್ನು ಕಳಿಸಿ ನಿನ್ನ ಪಶುಪ್ರಾಣಿಗಳನ್ನೂ ನಿನ್ನ ಹೊಲಗದ್ದೆಯಲ್ಲಿ ಇರುವದೆಲ್ಲವನ್ನು ಭದ್ರಪಡಿಸು. ಮನೆಗೆ ಸೇರದೆ ಹೊರಗೆ ಇರುವ ಎಲ್ಲ ನರಮಾನವರೂ, ಪಶುಪ್ರಾಣಿಗಳೂ ಆ ಕಲ್ಲಿನ ಮಳೆಯ ಹೊಡೆತದಿಂದ ಸಾಯುವರು'.”</verse>
				<verse number="20">ಫರೋಹನ ಸೇವಕರಲ್ಲಿ ಕೆಲವರು ಸರ್ವೇಶ್ವರನ ಈ ಮಾತಿಗೆ ಹೆದರಿ ತಮ್ಮ ಆಳುಗಳನ್ನೂ ಪಶುಪ್ರಾಣಿಗಳನ್ನೂ ಬೇಗನೆ ಮನೆಗೆ ಬರಮಾಡಿಕೊಂಡರು.</verse>
				<verse number="21">ಮಿಕ್ಕವರು ಆ ಮಾತನ್ನು ಗಮನಕ್ಕೆ ತಂದುಕೊಳ್ಳದೆ ತಮ್ಮ ಆಳುಗಳನ್ನೂ ಪಶುಪ್ರಾಣಿಗಳನ್ನೂ ಹೊಲಗದ್ದೆಗಳಲ್ಲೇ ಬಿಟ್ಟರು.</verse>
				<verse number="22">ಸರ್ವೇಶ್ವರ ಮೋಶೆಗೆ; “ಆಕಾಶದತ್ತ ನಿನ್ನ ಕೈಚಾಚು; ಆಗ ಈಜಿಪ್ಟ್ ದೇಶದಲ್ಲೆಲ್ಲಾ ಆನೆಕಲ್ಲಿನ ಮಳೆ ಬೀಳುವುದು - ಮನುಷ್ಯರ ಮೇಲೂ ಮೃಗಗಳ ಮೇಲೂ ಹೊಲದಲ್ಲಿನ ಪೈರುಪಚ್ಚೆಗಳ ಮೇಲೂ ಬೀಳುವುದು,” ಎಂದು ಹೇಳಿದರು.</verse>
				<verse number="23">ಅಂತೆಯೇ ಮೋಶೆ ತನ್ನ ಕೋಲನ್ನು ಆಕಾಶದ ಕಡೆಗೆ ಚಾಚಿದಾಗ ಸರ್ವೇಶ್ವರ ಗುಡುಗನ್ನೂ ಆನೆಕಲ್ಲಿನ ಮಳೆಯನ್ನೂ ಕಳುಹಿಸಿದರು. ಸಿಡಿಲುಗಳು ನೆಲಕ್ಕೆ ಅಪ್ಪಳಿಸಿದವು. ಈಜಿಪ್ಟ್ ದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದರು ಸರ್ವೇಶ್ವರ.</verse>
				<verse number="24">ಆ ಮಳೆ ಬಲು ರಭಸವಾಗಿತ್ತು. ಅದರೊಂದಿಗೆ ಮಿಂಚು ಫಳಫಳನೆ ಹೊಳೆಯುತ್ತಿತ್ತು. ಈಜಿಪ್ಟಿನವರು ಒಂದು ರಾಷ್ಟ್ರವಾದಂದಿನಿಂದ ಆ ದೇಶದಲ್ಲಿ ಅಂಥ ಘೋರವಾದ ಆನೆಕಲ್ಲಿನ ಮಳೆ ಆಗಿರಲಿಲ್ಲ.</verse>
				<verse number="25">ಆ ಮಳೆಯಿಂದ ಈಜಿಪ್ಟ್ ದೇಶದ ಎಲ್ಲಾ ಕಡೆಯಲ್ಲಿ ಮನುಷ್ಯರು - ಮೃಗಗಳು ಮಾತ್ರವಲ್ಲ ಬಯಲಿನಲ್ಲಿ ಇದ್ದ ಎಲ್ಲವೂ ನಾಶವಾದುವು; ಹೊಲಗದ್ದೆಗಳಲ್ಲಿದ್ದ ಪೈರುಪಚ್ಚೆಗಳೆಲ್ಲವು ಬಿದ್ದುಹೋದವು.</verse>
				<verse number="26">ಇಸ್ರಯೇಲರು ವಾಸವಾಗಿದ್ದ ಗೋಷೆನ್ ಪ್ರಾಂತ್ಯದಲ್ಲಿ ಮಾತ್ರ ಆ ಮಳೆ ಬೀಳಲಿಲ್ಲ.</verse>
				<verse number="27">ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, ಅವರಿಗೆ, “ನಾನು ಅಪರಾಧಿಯೆಂದು ಈಗ ಒಪ್ಪಿಕೊಳ್ಳುತ್ತೇನೆ. ಸರ್ವೇಶ್ವರನು ಸತ್ಯವಂತನು; ನಾನೂ ನನ್ನ ಜನರೂ ತಪ್ಪಿತಸ್ಥರು.</verse>
				<verse number="28">ಈ ಭಯಂಕರವಾದ ಗುಡುಗು ಮತ್ತು ಆನೆಕಲ್ಲು ಮಳೆ ಇನ್ನು ಸಾಕೇ ಸಾಕು. ಇವುಗಳನ್ನು ನಿಲ್ಲಿಸುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿರಿ. ಈ ದೇಶವನ್ನು ಬಿಟ್ಟು ಹೋಗುವುದಕ್ಕೆ ನಿಮಗೆ ಅಪ್ಪಣೆಕೊಡುತ್ತೇನೆ. ಇನ್ನು ನಿಮ್ಮನ್ನು ತಡೆಯುವುದಿಲ್ಲ,” ಎಂದು ಹೇಳಿದನು.</verse>
				<verse number="29">ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೆ ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಕಲ್ಲಿನ ಮಳೆಯು ನಿಂತುಹೋಗುವುವು. ಇದರಿಂದ ಇಡೀ ಲೋಕವು ಸರ್ವೇಶ್ವರನ ಅಧೀನದಲ್ಲಿದೆ ಎಂದು ತಾವು ತಿಳಿದುಕೊಳ್ಳುವಿರಿ.</verse>
				<verse number="30">ಆದರೂ ತಾವಾಗಲಿ ತಮ್ಮ ಪರಿವಾರದವರಾಗಲಿ ದೇವರಾದ ಸರ್ವೇಶ್ವರನಿಗೆ ಭಯಪಡುವುದಿಲ್ಲವೆಂದು ಬಲ್ಲೆನು,” ಎಂದನು.</verse>
				<verse number="31">ಜವೆಗೋದಿ ಮತ್ತು ಅಗಸೆ ಬೆಳೆಗಳು ನಾಶವವಾದವು. ಏಕೆಂದರೆ ಜವೆಗೋದಿ ತೆನೆಬಿಟ್ಟಿತ್ತು, ಅಗಸೆ ಮೊಗ್ಗು ಕಚ್ಚಿತ್ತು.</verse>
				<verse number="32">ಆದರೆ ಗೋದಿ ಮತ್ತು ಕಡಲೆ ಹಿಂದಿನ ಬೆಳೆಗಳಾಗಿದ್ದುದರಿಂದ ಅವುಗಳಿಗೆ ನಷ್ಟವಾಗಲಿಲ್ಲ.</verse>
				<verse number="33">ಮೋಶೆ ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಗೆ ಬಂದು ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸಿದನು. ಗುಡುಗು, ಆನೆಕಲ್ಲು ಹಾಗು ಮಳೆ ನಿಂತುಹೋದವು.</verse>
				<verse number="34">ಆದರೆ ಆ ಮಳೆ, ಆ ಕಲ್ಲುಮಳೆ, ಗುಡುಗು ನಿಂತುಹೋದದ್ದನ್ನು ಫರೋಹನು ಕಂಡಾಗ ಅವನು ಹಾಗು ಅವನ ಪರಿವಾರದವರು ತಮ್ಮ ಹೃದಯಗಳನ್ನು ಪುನಃ ಕಠಿಣವಾಗಿಸಿಕೊಂಡು, ಪಾಪ ಕಟ್ಟಿಕೊಂಡರು.</verse>
				<verse number="35">ಮೋಶೆಯ ಮುಖಾಂತರ ಸರ್ವೇಶ್ವರ ಹೇಳಿಸಿದಂತೆಯೇ ಆಯಿತು. ಫರೋಹನ ಹೃದಯ ಕಲ್ಲಾಯಿತು, ಇಸ್ರಯೇಲರನ್ನು ಅವನು ಹೋಗಲು ಬಿಡಲಿಲ್ಲ.</verse>
			</chapter>
			<chapter number="10">
				<verse number="1">ಬಳಿಕ ಸರ್ವೇಶ್ವರ ಸ್ವಾಮಿ ಮೋಶೆಗೆ: “ಫರೋಹನ ಬಳಿಗೆ ಮತ್ತೆ ಹೋಗು. ನಾನು ಅವನ ಮತ್ತು ಅವನ ಪರಿವಾರದವರ ಹೃದಯಗಳನ್ನು ಮೊಂಡಾಗಿಸಿದ್ದೇನೆ. ಏಕೆಂದರೆ ಈ ಸೂಚಕಕಾರ್ಯಗಳನ್ನು ಅವರ ಮುಂದೆ ನಡೆಸಲು ಆಸ್ಪದವಾಗಬೇಕು;</verse>
				<verse number="2">ಇಸ್ರಯೇಲರು ತಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ಈ ಸೂಚಕಕಾರ್ಯಗಳನ್ನು ತಿಳಿಸಬೇಕು; ಅಲ್ಲದೆ ಸರ್ವೇಶ್ವರ ಆದ ನಾನು ಈಜಿಪ್ಟಿನವರನ್ನು ಇಷ್ಟಬಂದ ಹಾಗೆ ಆಡಿಸಿ ದಂಡಿಸಿದೆನೆಂದು ತಿಳಿಸಬೇಕು. ಹೀಗೆ ನಾನೇ ಸರ್ವೇಶ್ವರನೆಂದು ಈ ಸೂಚಕಕಾರ್ಯಗಳಿಂದ ನೀವು ತಿಳಿದುಕೊಳ್ಳುವಿರಿ,” ಎಂದರು.</verse>
				<verse number="3">ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, \ಹಿಬ್ರಿಯರ ದೇವರಾಗಿರುವ ಸರ್ವೇಶ್ವರನ ಮಾತುಗಳಿವು: ‘ಎಲ್ಲಿಯವರೆಗೆ ನೀನು ನನಗೆ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸ ಹೋಗಲು ನನ್ನ ಜನರಿಗೆ ಅಪ್ಪಣೆ ಕೊಡು.</verse>
				<verse number="4">ಕೊಡದೆ ಹೋದರೆ ನಾಳೆ ನಿನ್ನ ರಾಜ್ಯದೊಳಗೆ ಮಿಡತೆಗಳನ್ನು ಬರಮಾಡುವೆನು.</verse>
				<verse number="5">ನೆಲ ಕರ್ರಗೆ ಕಾಣಿಸುವಷ್ಟು ಅವು ಭೂಮಿಯನ್ನೆಲ್ಲಾ ಆವರಿಸಿಕೊಳ್ಳುವುವು; ಆನೆಕಲ್ಲಿನ ಮಳೆಯಿಂದ ನಾಶ ಆಗದೆ ಉಳಿದದ್ದೆಲ್ಲವನ್ನು ಮಿಡತೆಗಳು ತಿಂದುಬಿಡುವವು. ಹೊಲದಲ್ಲಿರುವ ನಿಮ್ಮ ಎಲ್ಲ ಮರಗಳ ಎಲೆಚಿಗುರುಗಳನ್ನು ತಿಂದುಬಿಡುವುವು.</verse>
				<verse number="6">ನಿನ್ನ ಮನೆಗಳಲ್ಲೂ ನಿನ್ನ ಪರಿವಾರದವರ ಮನೆಗಳಲ್ಲೂ ಈಜಿಪ್ಟಿನವರ ಮನೆಗಳಲ್ಲೂ ಅವು ತುಂಬಿಕೊಳ್ಳುವುವು. ನಿಮ್ಮ ತಂದೆ ತಾತಂದಿರ ಕಾಲದಿಂದ ಇಂದಿನವರೆಗೂ ಅಂಥ ಮಿಡಿತೆದಂಡನ್ನು ಯಾರೂ ನೋಡಿಲ್ಲ.” ಹೀಗೆಂದು ಹೇಳಿ ಮೋಶೆ ಫರೋಹನ ಬಳಿಯಿಂದ ಹೊರಟುಹೋದನು.</verse>
				<verse number="7">ಆಗ ಪರಿವಾರದವರು ಫರೋಹನಿಗೆ, “ಈ ಮನುಷ್ಯ ಇನ್ನೆಷ್ಟುಕಾಲ ನಮಗೆ ಉರುಳಾಗಿರುವನೋ! ಆ ಜನರು ಹೋಗಿ ತಮ್ಮ ದೇವರಾದ ಸರ್ವೇಶ್ವರನನ್ನು ಆರಾಧಿಸಲು ಅಪ್ಪಣೆಕೊಟ್ಟುಬಿಡಿ. ಈಜಿಪ್ಟ್ ದೇಶವೇ ಹಾಳಾಗುತ್ತಿದೆಯೆಂದು ತಮ್ಮ ಮನಸ್ಸಿಗೆ ತೋಚಿರಬೇಕಲ್ಲವೆ?” ಎಂದು ಹೇಳಿದರು.</verse>
				<verse number="8">ಇದನ್ನು ಕೇಳಿದ ಫರೋಹನು ಮೋಶೆ ಮತ್ತು ಆರೋನರನ್ನು ಪುನಃ ಕರೆಸಿ, “ನೀವು ಹೋಗಿ ನಿಮ್ಮ ದೇವರಾದ ಸರ್ವೇಶ್ವರನನ್ನು ಆರಾಧಿಸಬಹುದು. ಆದರೆ ಯಾರ್ಯಾರು ಹೋಗಬೇಕೆನ್ನುತ್ತೀರಿ?” ಎಂದು ಕೇಳಿದನು.</verse>
				<verse number="9">ಅದಕ್ಕೆ ಮೋಶೆ, “ನಾವು ಸರ್ವೇಶ್ವರ ಸ್ವಾಮಿಗಾಗಿ ಹಬ್ಬವನ್ನು ಆಚರಿಸಬೇಕಾಗಿದೆ. ಆದಕಾರಣ ಚಿಕ್ಕವರು, ಮುದುಕರು ಎಲ್ಲರು ಹೋಗುತ್ತೇವೆ; ಗಂಡುಹೆಣ್ಣು ಮಕ್ಕಳನ್ನೂ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ,” ಎಂದು ಉತ್ತರಕೊಟ್ಟನು.</verse>
				<verse number="10">ಆಗ ಫರೋಹನು, “ನೀವು ನಿಮ್ಮ ಮನೆಯವರೆಲ್ಲರನ್ನು ಕರೆದುಕೊಂಡು ಹೋಗುವುದಕ್ಕೆ ನಾನೆಂದಿಗೂ ಅಪ್ಪಣೆಕೊಡುವುದಿಲ್ಲ. ಕೊಟ್ಟೆನಾದರೆ ಸರ್ವೇಶ್ವರನ ದಯೆಯೊಂದೇ ನಿಮ್ಮನ್ನು ಕಾಪಾಡಬೇಕಾಗುವುದು. ನೋಡಿ, ನೀವು ದುರಾಲೋಚನೆಯಿಂದ ಕೂಡಿದವರು ಎಂಬುದು ಸರಿಯಷ್ಟೆ!</verse>
				<verse number="11">ನಿಮ್ಮಲ್ಲಿ ಗಂಡಸರು ಮಾತ್ರ ಹೋಗಿ ಸರ್ವೇಶ್ವರನನ್ನು ಆರಾಧಿಸಬಹುದು. ನೀವು ಕೇಳಿಕೊಂಡದ್ದು ಅಷ್ಟೇ ಅಲ್ಲವೆ?” ಎಂದು ಹೇಳಿ ಅವರನ್ನು ತನ್ನ ಸನ್ನಿಧಿಯಿಂದ ಹೊರಡಿಸಿಬಿಟ್ಟನು.</verse>
				<verse number="12">ಸರ್ವೇಶ್ವರ ಮೋಶೆಗೆ, “ಈಜಿಪ್ಟ್ ದೇಶದ ಮೇಲೆ ಕೈಚಾಚಿ ಮಿಡಿತೆಗಳನ್ನು ಬರಮಾಡು. ಆನೆಕಲ್ಲಿನ ಮಳೆಯಿಂದ ನಾಶ ಆಗದೆ ಉಳಿದಿರುವ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡಲಿ,” ಎಂದು ಹೇಳಿದರು.</verse>
				<verse number="13">ಅಂತೆಯೇ ಮೋಶೆ ತನ್ನ ಕೋಲನ್ನು ಈಜಿಪ್ಟ್ ದೇಶದ ಮೇಲೆ ಚಾಚಿದನು. ಸರ್ವೇಶ್ವರ ಹಗಲಿರುಳು ಪೂರ್ವದಿಕ್ಕಿನಿಂದ ಗಾಳಿ ಬೀಸುವಂತೆ ಮಾಡಿದರು. ಆ ಗಾಳಿಯಿಂದಾಗಿ ಮುಂಜಾನೆಯಲ್ಲೇ ಮಿಡತೆಗಳು ಬಂದಿದ್ದವು.</verse>
				<verse number="14">ಅಪರಿಮಿತ ಸಂಖ್ಯೆಯಲ್ಲಿ ಅವು ಇಡೀ ಈಜಿಪ್ಟ್ ದೇಶದಲ್ಲಿ ಬಂದಿಳಿದು ಅದರ ಎಲ್ಲಾ ಕಡೆಗಳಲ್ಲಿ ಹರಡಿಕೊಂಡವು. ಅಂಥ ಮಿಡಿತೆಯ ದಂಡು ಹಿಂದೆಂದೂ ಬಂದಿರಲಿಲ್ಲ, ಮುಂದೆಯೂ ಬರುವಂತಿಲ್ಲ.</verse>
				<verse number="15">ನೆಲವೆಲ್ಲ ಕರ್ರಗೆ ಕಾಣಿಸುವಷ್ಟು ಅವು ಭೂಮಿಯನ್ನೆಲ್ಲಾ ಆವರಿಸಿಕೊಂಡವು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಪಚ್ಚೆ ಪೈರುಗಳನ್ನೂ ಗಿಡಮರ ಕಾಯಿಗಳನ್ನೂ ತಿಂದುಬಿಟ್ಟವು. ಈಜಿಪ್ಟ್ ದೇಶದಲ್ಲೆಲ್ಲಾ ಹಸುರಾದ ಗಿಡಮರಗಳೊಂದೂ ಉಳಿಯಲಿಲ್ಲ.</verse>
				<verse number="16">ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕೂಡಲೆ ಕರೆಯಿಸಿ, “ನಾನು ನಿಮ್ಮ ದೇವರಾದ ಸರ್ವೇಶ್ವರನಿಗೂ ನಿಮಗೂ ದ್ರೋಹಮಾಡಿದ್ದೇನೆ.</verse>
				<verse number="17">ಈ ಒಂದು ಸಾರಿ ನನ್ನನ್ನು ಕ್ಷಮಿಸಬೇಕು. ನಿಮ್ಮ ದೇವರಾದ ಸರ್ವೇಶ್ವರ ಈ ಮಾರಕ ವಿಪತ್ತನ್ನು ನನ್ನಿಂದ ತೊಲಗಿಸುವಂತೆ ಆತನನ್ನು ಪ್ರಾರ್ಥಿಸಬೇಕು,” ಎಂದು ವಿನಂತಿಸಿದನು.</verse>
				<verse number="18">ಮೋಶೆ ಫರೋಹನ ಬಳಿಯಿಂದ ಹೊರಟುಹೋಗಿ ಸರ್ವೇಶ್ವರ ಸ್ವಾಮಿಯನ್ನು ಬೇಡಿಕೊಂಡನು.</verse>
				<verse number="19">ಸರ್ವೇಶ್ವರ ಪಶ್ಚಿಮದಿಂದ ಬಿರುಗಾಳಿ ಬೀಸುವಂತೆ ಮಾಡಿದರು. ಅದು ಆ ಮಿಡಿತೆಗಳನ್ನು ಬಡಿದುಕೊಂಡು ಹೋಗಿ ಕೆಂಪು ಸಮುದ್ರದೊಳಗೆ ಹಾಕಿಬಿಟ್ಟಿತು. ಈಜಿಪ್ಟ್ ದೇಶದ ಮೇರೆಗಳೊಳಗೆ ಒಂದು ಮಿಡಿತೆಯನ್ನೂ ನಿಲ್ಲಲು ಬಿಡಲಿಲ್ಲ.</verse>
				<verse number="20">ಆದರೂ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣವಾಗಿಸಿದರು. ಅವನು ಇಸ್ರಯೇಲರನ್ನು ಹೋಗಲು ಬಿಡಲಿಲ್ಲ.</verse>
				<verse number="21">ಆ ಬಳಿಕ ಸರ್ವೇಶ್ವರ ಮೋಶೆಗೆ, “ಆಕಾಶದತ್ತ ನಿನ್ನ ಕೈಚಾಚು. ಆಗ ಈಜಿಪ್ಟ್ ದೇಶದಲ್ಲೆಲ್ಲಾ ಕತ್ತಲೆಯುಂಟಾಗುವುದು. ಜನರು ತಡವರಿಸಿ ನಡೆಯಬೇಕಾಗುವಷ್ಟು ಕತ್ತಲೆ ಉಂಟಾಗುವುದು.</verse>
				<verse number="22">ಮೋಶೆ ಆಕಾಶದತ್ತ ಕೈಚಾಚಿದಾಗ ಈಜಿಪ್ಟ್ ದೇಶದಲ್ಲೆಲ್ಲಾ ಮೂರು ದಿವಸ ಕಾರ್ಗತ್ತಲು ಮುಚ್ಚಿಕೊಂಡಿತು.</verse>
				<verse number="23">ಆ ಮೂರು ದಿವಸ ಒಬ್ಬರನ್ನೊಬ್ಬರು ನೋಡಲಾಗಲಿಲ್ಲ; ತಾವಿದ್ದ ಸ್ಥಳದಿಂದ ಏಳಲಿಲ್ಲ. ಆದರೆ ಇಸ್ರಯೇಲರೆಲ್ಲರು ವಾಸವಾಗಿದ್ದ ಸ್ಥಳಗಳಲ್ಲಿ ಬೆಳಕಿತ್ತು.</verse>
				<verse number="24">ಫರೋಹನು ಮೋಶೆಯನ್ನು ಕರೆಯಿಸಿ, “ನೀವು ಹೋಗಿ ಸರ್ವೇಶ್ವರನಿಗೆ ಆರಾಧನೆ ಮಾಡಿಬರಬಹುದು; ನಿಮ್ಮ ಮಡದಿ ಮಕ್ಕಳೂ ಹೋಗಿಬರಬಹುದು; ನಿಮ್ಮ ದನಕುರಿಗಳನ್ನು ಮಾತ್ರ ಇಲ್ಲೇ ಬಿಟ್ಟು ಹೋಗಬೇಕು,” ಎಂದನು.</verse>
				<verse number="25">ಅದಕ್ಕೆ ಮೋಶೆ, “ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ನಾವು ಸಮರ್ಪಿಸಬೇಕಾದ ಬಲಿಗಳಿಗೂ ದಹನಬಲಿಗಳಿಗೂ ಬೇಕಾದ ಪ್ರಾಣಿಗಳನ್ನು ತೆಗೆದುಕೊಂಡು ಹೋಗುವುದನ್ನು ನಮಗೆ ಬಿಡಿ.</verse>
				<verse number="26">ಅದು ಮಾತ್ರವಲ್ಲ, ನಮ್ಮ ಎಲ್ಲ ಪಶುಪ್ರಾಣಿಗಳನ್ನೂತೆಗೆದುಕೊಂಡು ಹೋಗಲು ಅಪ್ಪಣೆ ಕೊಡಿ. ಒಂದು ಗೊರಸನ್ನೂ ನಾವು ಬಿಟ್ಟುಹೋಗಲು ಆಗದು. ಈ ಪಶುಪ್ರಾಣಿಗಳಿಂದಲೇ ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ಬಲಿಯೊಪ್ಪಿಸಬೇಕಾಗಿದೆ ಅಲ್ಲವೆ? ಯಾವ ಯಾವ ಪ್ರಾಣಿಗಳನ್ನು ಅರ್ಪಿಸಬೇಕೋ ಅದು ನಾವು ಅಲ್ಲಿಗೆ ಸೇರುವುದಕ್ಕೆ ಮುಂಚೆ ನಮಗೆ ತಿಳಿಯದು,” ಎಂದನು.</verse>
				<verse number="27">ಸರ್ವೇಶ್ವರ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಅವರಿಗೆ ಅಪ್ಪಣೆಕೊಡಲು ಒಪ್ಪಲಿಲ್ಲ.</verse>
				<verse number="28">ಅವನು ಮೋಶೆಗೆ, “ಇಲ್ಲಿಂದ ಹೊರಡು; ಇನ್ನು ಮುಂದೆ ನನ್ನ ಸಮ್ಮುಖಕ್ಕೆ ಬರಲೇ ಬೇಡ, ಎಚ್ಚರಿಕೆ! ತಿರುಗಿ ಬಂದೆಯಾದರೆ ಮರಣದಂಡನೆ ಆಗುವುದು,” ಎಂದು ಹೇಳಿದನು.</verse>
				<verse number="29">ಅದಕ್ಕೆ ಮೋಶೆ, “ಅಪ್ಪಣೆ, ಇನ್ನು ಸಮ್ಮುಖಕ್ಕೆ ಬರುವುದೇ ಇಲ್ಲ,” ಎಂದನು.</verse>
			</chapter>
			<chapter number="11">
				<verse number="1">ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆ ಎಂದರು: “ಫರೋಹನಿಗೂ ಈಜಿಪ್ಟಿನವರಿಗೂ ಇನ್ನೊಂದು ಪಿಡುಗನ್ನು ಬರಮಾಡುತ್ತೇನೆ. ಅದು ಬಂದನಂತರ ಅವನು ನಿಮಗೆ ಇಲ್ಲಿಂದ ಹೋಗುವುದಕ್ಕೆ ಅಪ್ಪಣೆಕೊಡುವನು. ಅದು ಮಾತ್ರವಲ್ಲ, ನಿಮ್ಮೆಲ್ಲರನ್ನು ಅಲ್ಲಿಂದ ಅಟ್ಟಿಬಿಡುವನು.</verse>
				<verse number="2">ಆದುದರಿಂದ ಸ್ತ್ರೀಪುರುಷರೆಲ್ಲರು ತಮ್ಮ ತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂದು ನಿಮ್ಮ ಜನರಿಗೆ ಸ್ಪಷ್ಟವಾಗಿಹೇಳು,” ಎಂದರು.</verse>
				<verse number="3">ಈಜಿಪ್ಟಿನವರಿಗೆ ಇಸ್ರಯೇಲರ ಮೇಲೆ ಕನಿಕರ ಉಂಟಾಗುವಂತೆ ಮಾಡಿದರು ಸರ್ವೇಶ್ವರ. ಇದಲ್ಲದೆ ಈಜಿಪ್ಟ್ ದೇಶದ ಫರೋಹನ ಪರಿವಾರದವರು ಮೋಶೆಯನ್ನು ಮಹಾಪುರುಷನೆಂದು ಭಾವಿಸಿದರು.</verse>
				<verse number="4">ಮೋಶೆ ಫರೋಹನಿಗೆ ಇಂತೆಂದನು: “ಸರ್ವೇಶ್ವರ ಮಾಡಿರುವ ಅಪ್ಪಣೆ ಇದು: ‘ನಡುರಾತ್ರಿಯ ವೇಳೆಯಲ್ಲಿ ನಾನೇ ಈಜಿಪ್ಟಿನವರ ನಡುವೆ ಹಾದುಹೋಗುವೆನು.</verse>
				<verse number="5">ಆಗ, ಸಿಂಹಾಸನಾರೂಢನಾದ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಬೀಸುಕಲ್ಲನ್ನು ಹಿಡಿದು ಕೂತಿರುವ ದಾಸಿಯ ಚೊಚ್ಚಲು ಮಗನವರೆಗೂ ಈಜಿಪ್ಟ್ ದೇಶದಲ್ಲಿ ಚೊಚ್ಚಲು ಮಕ್ಕಳೆಲ್ಲರು ಸಾಯುವರು. ಪಶುಪ್ರಾಣಿಗಳಲ್ಲೂ ಚೊಚ್ಚಲಾದವುಗಳೆಲ್ಲಾ ಸಾಯುವುವು.</verse>
				<verse number="6">ಆಗ ಈಜಿಪ್ಟ್ ದೇಶದಲ್ಲೆಲ್ಲಾ ದೊಡ್ಡ ಗೋಳಾಟ ಉಂಟಾಗುವುದು. ಅಂಥ ಗೋಳಾಟ ಈವರೆಗೂ ಇರಲಿಲ್ಲ. ಇನ್ನು ಮುಂದೆಯೂ ಇರುವುದಿಲ್ಲ.</verse>
				<verse number="7">ಆದರೆ ಇಸ್ರಯೇಲರಲ್ಲಿರುವ ಮನುಷ್ಯನ ವಿರುದ್ಧವಾಗಲಿ, ಪ್ರಾಣಿಯ ವಿರುದ್ಧವಾಗಲಿ, ಒಂದು ನಾಯಿ ಕೂಡ ಬೊಗಳುವುದಿಲ್ಲ. ಇದರಿಂದ ಸರ್ವೇಶ್ವರ ಇಸ್ರಯೇಲರಿಗೂ ಈಜಿಪ್ಟಿನವರಿಗೂ ತಾರತಮ್ಯ ಮಾಡಿದ್ದಾರೆಂದು ನಿಮಗೆ ಗೊತ್ತಾಗುವುದು.</verse>
				<verse number="8">ಆಗ ನಿನ್ನ ಪರಿವಾರದವರಾದ ಇವರೆಲ್ಲರು ನನ್ನ ಬಳಿಗೆ ಬಂದು ಅಡ್ಡಬಿದ್ದು - ನೀವೂ ನಿಮ್ಮ ಅಧೀನದಲ್ಲಿರುವ ಜನರೆಲ್ಲರು ನಮ್ಮನ್ನು ಬಿಟ್ಟು ಹೋಗಿಬಿಡಿ - ಎಂದು ಬೇಡುವರು. ಇದಾದ ಮೇಲೆ ನಾನು ಹೊರಟುಹೋಗುವೆನು.’ ಈ ಮಾತುಗಳನ್ನು ಹೇಳಿ ಮೋಶೆ ಕೋಪದಿಂದ ಕಿಡಿಕಿಡಿಯಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.</verse>
				<verse number="9">ಸರ್ವೇಶ್ವರ ಮೋಶೆಗೆ, “ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ; ಆದ್ದರಿಂದ ಈಜಿಪ್ಟ್ ದೇಶದಲ್ಲಿ ಸೂಚಕಕಾರ್ಯಗಳನ್ನು ಹೆಚ್ಚಾಗಿ ನಡೆಸಲು ಆಸ್ಪದ ದೊರಕುವುದು,” ಎಂದು ಹೇಳಿದರು.</verse>
				<verse number="10">ಮೋಶೆ ಮತ್ತು ಆರೋನರು ಫರೋಹನ ಮುಂದೆ ಈ ಸೂಚಕಕಾರ್ಯಗಳನ್ನೆಲ್ಲಾ ಮಾಡಿದ್ದರೂ ಸರ್ವೇಶ್ವರ ಫರೋಹನ ಹೃದಯವನ್ನು ಕಲ್ಲಾಗಿಸಿದ್ದರು. ಅವನು ತನ್ನ ದೇಶವನ್ನು ಬಿಟ್ಟು ಹೊರಡುವುದಕ್ಕೆ ಇಸ್ರಯೇಲರಿಗೆ ಅಪ್ಪಣೆಕೊಡದೆ ಹೋದನು.</verse>
			</chapter>
			<chapter number="12">
				<verse number="1">ಈಜಿಪ್ಟ್ ದೇಶದಲ್ಲಿ ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಹೀಗೆಂದರು:</verse>
				<verse number="2">“ಎಲ್ಲ ಮಾಸಗಳಲ್ಲಿ ಇದೇ ನಿಮಗೆ ಆದಿ ಮಾಸವಾಗಿರಬೇಕು. ಇದೇ ನಿಮಗೆ ಪ್ರತಿ ವರ್ಷದ ಮೊದಲನೆಯ ತಿಂಗಳಾಗಿರಬೇಕು.</verse>
				<verse number="3">ಈ ವಿಷಯದಲ್ಲಿ ನೀವು ಇಸ್ರಯೇಲರ ಸಮಾಜಕ್ಕೆಲ್ಲ ಈ ರೀತಿ ಕಟ್ಟಳೆಯಿಡಬೇಕು: ‘ಈ ತಿಂಗಳ ಹತ್ತನೆಯ ದಿನದಲ್ಲಿ ನಿಮ್ಮ ನಿಮ್ಮ ಗೋತ್ರಗಳ ಪ್ರತಿಯೊಂದು ಮನೆಯವರು ಒಂದೊಂದು ಕುರಿಮರಿಯನ್ನಾಗಲಿ, ಆಡುಮರಿಯನ್ನಾಗಲಿ ಆರಿಸಿಕೊಳ್ಳಬೇಕು.</verse>
				<verse number="4">ಕುಟುಂಬವು ಚಿಕ್ಕದಾಗಿದ್ದು ಒಂದು ಮರಿಯನ್ನು ಪೂರ್ತಿಯಾಗಿ ತಿನ್ನಲಾಗದಿದ್ದರೆ ಹತ್ತಿರದ ನೆರೆಮನೆಯ ಕುಟುಂಬದೊಂದಿಗೆ ಸೇರಿ ಒಬ್ಬೊಬ್ಬನು ಇಷ್ಟಿಷ್ಟು ತಿನ್ನುವನೆಂದು ಲೆಕ್ಕ ಹಾಕಿ ಜನಗಳ ಸಂಖ್ಯಾನುಸಾರ ಮರಿಗಳನ್ನು ಆರಿಸಿಕೊಳ್ಳಲಿ.</verse>
				<verse number="5">ಆ ಮರಿಯು ಯಾವ ದೋಷವೂ ಇಲ್ಲದ ಒಂದು ವರ್ಷದ ಗಂಡಾಗಿರಬೇಕು. ಕುರಿಗಳಿಂದಾಗಲಿ ಆಡುಗಳಿಂದಾಗಲಿ ಅದನ್ನು ಆರಿಸಿಕೊಳ್ಳಬಹುದು.</verse>
				<verse number="6">ಈ ತಿಂಗಳಿನ ಹದಿನಾಲ್ಕನೆಯ ದಿನದವರೆಗೆ ಅವುಗಳನ್ನು ಇಟ್ಟುಕೊಂಡಿದ್ದು ಆ ದಿನದ ಸಂಜೆವೇಳೆಯಲ್ಲಿ ಇಸ್ರಯೇಲ್ ಸಮಾಜದವರೆಲ್ಲರು ತಮ್ಮ ತಮ್ಮ ಕೂಟಗಳಲ್ಲಿ ಕೊಯ್ಯಬೇಕು.</verse>
				<verse number="7">ಅವುಗಳ ರಕ್ತದಲ್ಲಿ ಸ್ವಲ್ಪ ತೆಗೆದು ತಾವು ಆ ಭೋಜನ ಮಾಡುವ ಮನೆಯ ಬಾಗಿಲಿನ ಎರಡು ನಿಲುವು ಕಂಬಗಳಿಗೂ ಮೇಲಿನ ಪಟ್ಟಿಗೂ ಹಚ್ಚಬೇಕು.</verse>
				<verse number="8">ಆ ರಾತ್ರಿಯಲ್ಲೇ ಆ ಮಾಂಸವನ್ನು ತಿನ್ನಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಪಲ್ಯಗಳ ಸಮೇತ ಊಟಮಾಡಬೇಕು.</verse>
				<verse number="9">ಅದನ್ನು ಹಸಿಯಾಗಿಯೋ ಅಥವಾ ನೀರಿನಲ್ಲಿ ಬೇಯಿಸಿಯೋ ತಿನ್ನಕೂಡದು. ಅದನ್ನೆಲ್ಲಾ, ತಲೆ, ಕಾಲು, ಒಳ ಭಾಗಗಳ ಸಹಿತವಾಗಿ, ಬೆಂಕಿಯಲ್ಲಿ ಸುಟ್ಟೇ ತಿನ್ನಬೇಕು.</verse>
				<verse number="10">ಮರುದಿನದ ಬೆಳಗಿನ ತನಕ ಅದರಲ್ಲಿ ಸ್ವಲ್ಪವನ್ನಾದರು ಮಿಗಿಸಕೂಡದು. ಬೆಳಗಿನವರೆಗೆ ಮಿಕ್ಕದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.</verse>
				<verse number="11">ಆ ಭೋಜನವನ್ನು ಮಾಡಬೇಕಾದ ಕ್ರಮ ಇದು: ನೀವು ನಡುಕಟ್ಟಿಕೊಂಡು, ಕೆರಮೆಟ್ಟಿಕೊಂಡು ಊರುಗೋಲನ್ನು ಹಿಡಿದುಕೊಂಡು ಬೇಗ ಬೇಗನೆ ಊಟಮಾಡಬೇಕು. ಏಕೆಂದರೆ ಅದು ಸರ್ವೇಶ್ವರ ಸ್ವಾಮಿಗೆ ಆಚರಿಸತಕ್ಕ ಪಾಸ್ಕಹಬ್ಬ.</verse>
				<verse number="12">ಆ ರಾತ್ರಿ ನಾನು ಈಜಿಪ್ಟ್ ದೇಶದ ನಡುವೆ ಹಾದುಹೋಗುವೆನು; ಮನುಷ್ಯರಾಗಲಿ, ಪ್ರಾಣಿಗಳಾಗಲಿ ಚೊಚ್ಚಲಾದುದೆಲ್ಲವನ್ನು ಸಂಹರಿಸುವೆನು. ಈಜಿಪ್ಟ್ ದೇಶದ ಸಮಸ್ತ ದೇವತೆಗಳನ್ನೂ ದಂಡಿಸುವೆನು. ನಾನೇ ಸರ್ವೇಶ್ವರ!</verse>
				<verse number="13">ನೀವು ಬಾಗಿಲಿಗೆ ಹಚ್ಚಿದ ಆ ರಕ್ತವು ನೀವಿರುವ ಮನೆಗಳನ್ನು ಸೂಚಿಸುವುದು. ಅದನ್ನು ಕಂಡು ನಿಮಗೆ ಯಾವ ಹಾನಿಯನ್ನು ಮಾಡದೆ ಮುಂದಕ್ಕೆ ದಾಟಿಹೋಗುವೆನು. ನಾನು ಈಜಿಪ್ಟಿನವರನ್ನು ಸಂಹರಿಸುವಾಗ ನಿಮಗೆ ಯಾವ ಕೇಡೂ ಆಗದು.</verse>
				<verse number="14">ಆ ದಿನವು ನಿಮಗೆ ಸ್ಮರಣೀಯ ದಿನವಾಗಿರುವುದು. ಅಂದು ನೀವು ಸರ್ವೇಶ್ವರನ ಗೌರವಾರ್ಥ ಹಬ್ಬವನ್ನು ಕೊಂಡಾಡಬೇಕು. ಅದನ್ನು ಶಾಶ್ವತ ನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು.</verse>
				<verse number="15">ಏಳು ದಿವಸ ನೀವು ಹುಳಿರಹಿತ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳಿಂದ ತೆಗೆದುಬಿಡಬೇಕು. ಆ ಏಳು ದಿನಗಳಲ್ಲಿ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನನ್ನು ಇಸ್ರಯೇಲರಿಂದ ಬಹಿಷ್ಕರಿಸಬೇಕು.</verse>
				<verse number="16">ಮೊದಲನೆಯ ದಿನದಲ್ಲೇ ದೇವಾರಾಧನೆಗಾಗಿ ಸಭೆ ಸೇರಬೇಕು. ಏಳನೆಯ ದಿನದಲ್ಲೂ ದೇವಾರಾಧನೆಗಾಗಿ ಸಭೆಸೇರಬೇಕು. ಈ ಎರಡೂ ದಿವಸಗಳಲ್ಲಿ ಯಾವ ಕೆಲಸವನ್ನೂ ಮಾಡಕೂಡದು. ಊಟಕ್ಕೆ ಬೇಕಾದುದನ್ನು ಮಾತ್ರ ಮಾಡಬಹುದು.</verse>
				<verse number="17">ಹುಳಿರಹಿತ ರೊಟ್ಟಿಯನ್ನು ತಿನ್ನುವ ಹಬ್ಬವನ್ನು ನೀವು ಆಚರಿಸಬೇಕು. ಏಕೆಂದರೆ ಆ ದಿನದಲ್ಲೇ ನಾನು ನಿಮ್ಮ ಪಾಳೆಯದವರನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದದ್ದು. ನೀವೂ ನಿಮ್ಮ ಸಂತತಿಯವರೂ ಆ ದಿನವನ್ನು ಆಚರಣೆಗೆ ತರಬೇಕು.</verse>
				<verse number="18">ಮೊದಲನೇ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯಿಂದ ಇಪ್ಪತ್ತೊಂದನೆಯ ದಿನದ ಸಂಜೆಯವರೆಗೂ ನೀವು ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು.</verse>
				<verse number="19">ಏಳು ದಿನ ನಿಮ್ಮ ಮನೆಗಳಲ್ಲಿ ಹುಳಿಹಿಟ್ಟೇ ಇರಕೂಡದು. ಹುಳಿ ಬೆರಸಿದ್ದನ್ನು ತಿನ್ನುವವನು ಪರದೇಶದವನಾಗಿರಲಿ, ಸ್ವದೇಶದವನಾಗಿರಲಿ ಇಸ್ರಯೇಲ್ ಜನರಿಂದ ಬಹಿಷ್ಕೃತನು.</verse>
				<verse number="20">ನೀವು ನಿಮ್ಮ ಎಲ್ಲಾ ಮನೆಗಳಲ್ಲಿ ಹುಳಿರಹಿತ ರೊಟ್ಟಿಗಳನ್ನು ತಿನ್ನಬೇಕೇ ಹೊರತು ಹುಳಿಸಹಿತವಾದ ಯಾವುದನ್ನೂ ತಿನ್ನಕೂಡದು,” ಎಂದು ವಿಧಿಸಿದರು.</verse>
				<verse number="21">ಮೋಶೆ ಇಸ್ರಯೇಲರ ಹಿರಿಯರೆಲ್ಲರನ್ನು ಕರೆಯಿಸಿ ಅವರಿಗೆ, “ನೀವು ನಿಮ್ಮ ನಿಮ್ಮ ಕುಟುಂಬಗಳಿಗಾಗಿ ಹಿಂಡಿನಿಂದ ಮರಿಗಳನ್ನು ಆರಿಸಿಕೊಂಡು ಪಾಸ್ಕ ಹಬ್ಬಕ್ಕೆ ಕೊಯ್ಯಿರಿ.</verse>
				<verse number="22">ಹಿಸ್ಸೋಪ್ ಗಿಡದ ಕುಚ್ಚನ್ನು ಬಟ್ಟಲಿನಲ್ಲಿರುವ ಆ ರಕ್ತದಲ್ಲಿ ಅದ್ದಿ ಬಾಗಿಲಿನ ಪಟ್ಟಿಗೂ ಅದರ ನಿಲುವು ಕಂಬಗಳೆರಡಕ್ಕೂ ಹಚ್ಚಿರಿ. ಬಳಿಕ ನಿಮ್ಮಲ್ಲಿ ಒಬ್ಬರೂ ಸೂರ್ಯೋದಯದವರೆಗೆ ಬಾಗಿಲಿನಿಂದ ಹೊರಗೆ ಹೋಗಕೂಡದು.</verse>
				<verse number="23">ಸರ್ವೇಶ್ವರ ಈಜಿಪ್ಟಿನವರನ್ನು ವಧಿಸಲು ಆ ದೇಶದ ನಡುವೆ ಹಾದುಹೋಗುವಾಗ ನಿಮ್ಮ ನಿಮ್ಮ ಮನೆಬಾಗಲಿನ ಮೇಲ್ಪಟ್ಟಿಯಲ್ಲೂ ಹಾಗೂ ಎರಡು ನಿಲುವು ಕಂಬಗಳಲ್ಲೂ ಆ ರಕ್ತವನ್ನು ಕಂಡು ಮುಂದಕ್ಕೆ ದಾಟಿಹೋಗುವರು. ನಿಮ್ಮನ್ನು ವಧಿಸಲು ವಿನಾಶಕನನ್ನು ನಿಮ್ಮ ಮನೆಗಳಿಗೆ ಅವರು ಬರಗೊಡಿಸುವುದೇ ಇಲ್ಲ.</verse>
				<verse number="24">ನೀವು ಮತ್ತು ನಿಮ್ಮ ಸಂತತಿಯವರು ಈ ನಿಯಮಗಳನ್ನು ಶಾಶ್ವತವಾಗಿ ಆಚರಿಸಬೇಕು.</verse>
				<verse number="25">ಸರ್ವೇಶ್ವರ ತಮ್ಮ ವಾಗ್ದಾನದ ಮೇರೆಗೆ ನಿಮಗೆ ಕೊಡುವ ನಾಡಿಗೆ ನೀವು ಸೇರಿದಾಗ ಈ ವಿಧಿಯನ್ನು ಅನುಸರಿಸಬೇಕು.</verse>
				<verse number="26">ಮುಂದಕ್ಕೆ ನಿಮ್ಮ ಮಕ್ಕಳು, ‘ನೀವು ನಡೆಸುವ ಈ ವಿಧಿಯ ಅರ್ಥವೇನು?’ ಎಂದು ಕೇಳಿದಾಗ ನೀವು ಅವರಿಗೆ,</verse>
				<verse number="27">‘ಸರ್ವೇಶ್ವರ ಸ್ವಾಮಿ ಈಜಿಪ್ಟಿನವರನ್ನು ಸಂಹರಿಸಿದಾಗ ಆ ದೇಶದಲ್ಲೇ ಇದ್ದ ಇಸ್ರಯೇಲರ ಮನೆಗಳನ್ನು ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮವರನ್ನು ಉಳಿಸಿದರು. ಆದ್ದರಿಂದ ಸರ್ವೇಶ್ವರ ಸ್ವಾಮಿಯ ಗೌರವಾರ್ಥ ಈ ಪಾಸ್ಕ ಬಲಿಯ ಆಚರಣೆಯನ್ನು ನಡೆಸುತ್ತಿದ್ದೇವೆ’ ಎಂದು ಉತ್ತರಕೊಡಿ,” ಎಂದು ಹೇಳಿದನು. ...</verse>
				<verse number="28">ಜನರು ತಲೆಬಾಗಿ ನಮಸ್ಕರಿಸಿದರು. ಇಸ್ರಯೇಲರು ಅಲ್ಲಿಂದ ಹೊರಟು ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ನಡೆದುಕೊಂಡರು.</verse>
				<verse number="29">ಅರ್ಧರಾತ್ರಿಯಲ್ಲಿ ಸರ್ವೇಶ್ವರ ಸ್ವಾಮಿ ಸಿಂಹಾಸನಾರೂಢನಾಗಬೇಕಾಗಿದ್ದ ಫರೋಹನ ಚೊಚ್ಚಲು ಮಗನು ಮೊದಲ್ಗೊಂಡು ಸೆರೆಯಲ್ಲಿದ್ದ ಖೈದಿಯ ಚೊಚ್ಚಲ ಮಗನವರೆಗೂ ಈಜಿಪ್ಟ್ ದೇಶದಲ್ಲಿದ್ದ ಎಲ್ಲ ಚೊಚ್ಚಲು ಮಕ್ಕಳನ್ನೂ ಪ್ರಾಣಿಗಳ ಚೊಚ್ಚಲ ಮರಿಗಳನ್ನೂ ಸಂಹಾರ ಮಾಡಿದರು.</verse>
				<verse number="30">ಆ ರಾತ್ರಿ ಫರೋಹನೂ ಅವನ ಪರಿವಾರದವರೂ ಈಜಿಪ್ಟಿನವರೆಲ್ಲರೂ ಎದ್ದು ನೋಡಿದಾಗ ಶವವಿಲ್ಲದ ಮನೆ ಒಂದೂ ಇರಲಿಲ್ಲ. ಆದ್ದರಿಂದ ಆ ದೇಶದಲ್ಲೆಲ್ಲಾ ದೊಡ್ಡ ಗೋಳಾಟ ಎದ್ದಿತು.</verse>
				<verse number="31">ಫರೋಹನು ಆ ರಾತ್ರಿಯಲ್ಲೆ ಮೋಶೆ ಮತ್ತು ಆರೋನರನ್ನು ಕರೆಯಿಸಿದನು. “ನೀವೂ ಹಾಗು ಇಸ್ರಯೇಲರೆಲ್ಲರೂ ನನ್ನ ಜನರನ್ನು ಬಿಟ್ಟು ಹೊರಟುಹೋಗಿ.</verse>
				<verse number="32">ನೀವು ಕೇಳಿಕೊಂಡಂತೆ ಸರ್ವೇಶ್ವರನನ್ನು ಆರಾಧಿಸಿ. ನಿಮ್ಮ ಕೋರಿಕೆಯಂತೆ ಕುರಿದನಗಳನ್ನೂ ತೆಗೆದುಕೊಂಡು ಹೋಗಬಹುದು. ನನ್ನ ಹಿತಕ್ಕಾಗಿಯೂ ಪ್ರಾರ್ಥನೆಮಾಡಿ,” ಎಂದನು.</verse>
				<verse number="33">ಈಜಿಪ್ಟಿನವರು, “ನಾವೆಲ್ಲರು ಸಾಯುತ್ತೇವೆ,” ಎಂದುಕೊಂಡು ತಮ್ಮ ದೇಶವನ್ನು ಬಿಟ್ಟು ಬೇಗನೆ ಹೋಗಬೇಕೆಂದು ಇಸ್ರಯೇಲರನ್ನು ಒತ್ತಾಯಪಡಿಸಿದರು.</verse>
				<verse number="34">ಆದುದರಿಂದ ಇಸ್ರಯೇಲರು ಹಿಟ್ಟಿಗೆ ಹುಳಿಹಾಕುವುದಕ್ಕಿಂತ ಮುಂಚೆಯೇ ನಾದುವ ಹರಿವಾಣಗಳಲ್ಲಿದ್ದ ಕಣಕದ ಮುದ್ದೆಯನ್ನು ಹಾಗೆಯೇ ಗಂಟುಕಟ್ಟಿ ತಮ್ಮ ಹೆಗಲಿನ ಮೇಲೆ ಹಾಕಿಕೊಂಡು ಹೊರಟೇಬಿಟ್ಟರು.</verse>
				<verse number="35">ಮೋಶೆ ಹೇಳಿಕೊಟ್ಟ ಹಾಗೆ ಈಜಿಪ್ಟಿನವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ಬಟ್ಟೆಗಳನ್ನು ಕೇಳಿಕೊಂಡರು.</verse>
				<verse number="36">ಇಸ್ರಯೇಲರ ಮೇಲೆ ಈಜಿಪ್ಟಿನವರಿಗೆ ದಯೆ ಹುಟ್ಟುವಂತೆ ಮಾಡಿದ್ದರು ಸರ್ವೇಶ್ವರ. ಆದ್ದರಿಂದ ಅವರು ಕೇಳಿಕೊಂಡದ್ದನ್ನು ಈಜಿಪ್ಟಿನವರು ಕೊಟ್ಟುಬಿಟ್ಟರು. ಹೀಗೆ ಇಸ್ರಯೇಲರು ಈಜಿಪ್ಟಿನವರ ಸೊತ್ತನ್ನು ಸುಲಿಗೆ ಮಾಡಿಕೊಂಡರು.</verse>
				<verse number="37">ಇಸ್ರಯೇಲರು ರಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಅವರಲ್ಲಿ ಮಹಿಳೆಯರನ್ನೂ ಮಕ್ಕಳನ್ನೂ ಬಿಟ್ಟು ಗಂಡಸರ ಸಂಖ್ಯೆಯೇ ಸುಮಾರು ಆರು ಲಕ್ಷವಿತ್ತು.</verse>
				<verse number="38">ಅವರೊಂದಿಗೆ ಬಹುಮಂದಿ ಅನ್ಯದೇಶೀಯರೂ ಹೊರಟು ಬಂದಿದ್ದರು. ಕುರಿ, ದನ ಮುಂತಾದ ಪಶುಪ್ರಾಣಿಗಳು ಬಹಳವಿದ್ದವು.</verse>
				<verse number="39">ಈಜಿಪ್ಟ್ ದೇಶದಿಂದ ಅವರು ತಂದಿದ್ದ ಕಣಕದ ಮುದ್ದೆಯಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಸುಟ್ಟರು. ಅಲ್ಲಿಂದ ಅವರನ್ನು ಹೊರಡಿಸಿದಾಗ ಸ್ವಲ್ಪವೂ ಸಮಯ ಸಿಕ್ಕದೆ ಕಣಕದಲ್ಲಿ ಹುಳಿಯನ್ನು ಕಲಸಲಿಕ್ಕೂ ಆಗಲಿಲ್ಲ ಹಾಗು ಬೇರೆ ಆಹಾರವನ್ನು ಸಿದ್ಧಪಡಿಸಿಕೊಳ್ಳಲೂ ಸಾಧ್ಯವಾಗಿರಲಿಲ್ಲ.</verse>
				<verse number="40">ಇಸ್ರಯೇಲರು ಈಜಿಪ್ಟ್ ದೇಶದಲ್ಲಿ ನಾನೂರಮೂವತ್ತು ವರ್ಷಗಳ ಕಾಲ ವಾಸವಾಗಿದ್ದರು.</verse>
				<verse number="41">ಈ ನಾನೂರ ಮೂವತ್ತು ವರ್ಷಗಳು ಕಳೆದ ನಂತರ ಅದೇ ದಿವಸದಲ್ಲಿ ಸರ್ವೇಶ್ವರನ ಪಡೆಗಳೆಲ್ಲವೂ ಈಜಿಪ್ಟ್ ದೇಶವನ್ನು ಬಿಟ್ಟು ಹೊರಟುಬಂದವು.</verse>
				<verse number="42">ಸರ್ವೇಶ್ವರ ಅವರನ್ನು ಈಜಿಪ್ಟ್ ದೇಶದಿಂದ ಹೊರಗೆ ಬರಮಾಡಲು ಜಾಗರೂಕರಾಗಿದ್ದದ್ದು ಆ ರಾತ್ರಿಯೇ. ಆದುದರಿಂದಲೆ ಇಸ್ರಯೇಲರೆಲ್ಲರು ತಲತಲಾಂತರಕ್ಕೂ ಸರ್ವೇಶ್ವರನ ಗೌರವಾರ್ಥ ಈ ರಾತ್ರಿಯಲ್ಲೇ ಜಾಗರಣೆಯನ್ನು ಅನುಸರಿಸಬೇಕು.</verse>
				<verse number="43">ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಹೀಗೆಂದರು: “ಪಾಸ್ಕಹಬ್ಬ ಆಚರಣೆಯ ಕ್ರಮ ಇದು - ವಿದೇಶೀಯನಾರೂ ಆ ಭೋಜನದಲ್ಲಿ ಪಾಲ್ಗೊಳ್ಳಬಾರದು.</verse>
				<verse number="44">ನೀವು ಕ್ರಯಕ್ಕೆ ಕೊಂಡ ಜೀತಗಾರನು ಸುನ್ನತಿ ಮಾಡಿಸಿಕೊಂಡವನಾದರೆ ಅಂಥವನು ಅದರಲ್ಲಿ ಭಾಗವಹಿಸಬಹುದು.</verse>
				<verse number="45">ತಾತ್ಕಾಲಿಕವಾಗಿ ತಂಗಿರುವವನಾಗಲಿ ಕೂಲಿಯಾಳಾಗಲಿ ಅದರಲ್ಲಿ ಭಾಗವಹಿಸಬಾರದು.</verse>
				<verse number="46">ಅಡಿಗೆ ಮಾಡಿದ ಮನೆಯಲ್ಲೆ ಅದನ್ನು ಊಟಮಾಡಬೇಕು. ಅದರಲ್ಲಿ ಕಿಂಚಿತ್ತನ್ನೂ ಆ ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಬಾರದು. ಬಲಿಪ್ರಾಣಿಯ ಎಲುಬೊಂದನ್ನಾದರೂ ಮುರಿಯಕೂಡದು.</verse>
				<verse number="47">ಇಸ್ರಯೇಲರೆಲ್ಲರೂ ಈ ಹಬ್ಬವನ್ನು ಆಚರಿಸಬೇಕು.</verse>
				<verse number="48">ನಿಮ್ಮ ಬಳಿ ವಾಸವಾಗಿರುವ ವಿದೇಶೀಯನೊಬ್ಬನು ಸರ್ವೇಶ್ವರನಿಗೆ ಈ ಪಾಸ್ಕಹಬ್ಬವನ್ನು ಕೊಂಡಾಡಬೇಕೆಂಬ ಆಸೆಯಿದ್ದರೆ ಅವನೂ ಅವನ ಕುಟುಂಬಕ್ಕೆ ಸೇರಿದ ಗಂಡಸರೆಲ್ಲರೂ ಸುನ್ನತಿಮಾಡಿಸಿಕೊಳ್ಳಬೇಕು. ಬಳಿಕ ಅವನು ಬಂದು ಈ ಹಬ್ಬವನ್ನು ಆಚರಿಸಬಹುದು. ಅಂಥವನು ಸ್ವದೇಶದವನಂತೆ ಆಗುತ್ತಾನೆ. ಆದರೆ ಸುನ್ನತಿ ಮಾಡಿಸಿಕೊಳ್ಳದ ಯಾವನೂ ಆ ಭೋಜನದಲ್ಲಿ ಭಾಗಿ ಆಗಕೂಡದು.</verse>
				<verse number="49">ಸ್ವದೇಶಿಗೂ ನಿಮ್ಮೊಡನೆ ವಾಸವಾಗಿರುವ ವಿದೇಶಿಗೂ ಅನ್ವಯಿಸುವ ವಿಧಿ ಒಂದೇ ಆಗಿರುತ್ತದೆ,”</verse>
				<verse number="50">ಮೋಶೆ ಮತ್ತು ಆರೋನರಿಗೆ ಸರ್ವೇಶ್ವರ ಆಜ್ಞಾಪಿಸಿದ ಮೇರೆಗೆ ಇಸ್ರಯೇಲರೆಲ್ಲರೂ ನಡೆದುಕೊಂಡರು.</verse>
				<verse number="51">ಆ ದಿನ ಸರ್ವೇಶ್ವರ ಇಸ್ರಯೇಲರನ್ನು ಪಡೆಪಡೆಯಾಗಿ ಈಜಿಪ್ಟ್ ದೇಶದಿಂದ ಹೊರಗೆ ಕರೆದೊಯ್ದರು.</verse>
			</chapter>
			<chapter number="13">
				<verse number="1">ಸರ್ವೇಶ್ವರ ಸ್ವಾಮಿ ಮೋಶೆಗೆ,</verse>
				<verse number="2">“ಚೊಚ್ಚಲಾಗಿ ಹುಟ್ಟಿದ್ದೆಲ್ಲವನ್ನು ನನಗೆ ಮೀಸಲಾಗಿಡು; ಇಸ್ರಯೇಲರಲ್ಲಿ ಮನುಷ್ಯರಿಗಾಗಲಿ ಪಶುಪ್ರಾಣಿಗಳಿಗಾಗಲಿ ಹುಟ್ಟಿದ ಪ್ರಥಮ ಗರ್ಭಫಲ ನನ್ನದೇ,” ಎಂದು ಹೇಳಿದರು.</verse>
				<verse number="3">ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.</verse>
				<verse number="4">ಚೈತ್ರಮಾಸದ ಈ ದಿನದಂದು ನೀವು ಹೊರಟವರು.</verse>
				<verse number="5">ಸರ್ವೇಶ್ವರ ನಿಮ್ಮ ಪೂರ್ವಜರಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ, ನೀವು ಈ ಆಚರಣೆಯನ್ನು ಈ ತಿಂಗಳಿನಲ್ಲೇ ನಡೆಸಬೇಕು.</verse>
				<verse number="6">ಏಳು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನದಲ್ಲಿ ಸರ್ವೇಶ್ವರನ ಗೌರವಾರ್ಥ ಹಬ್ಬ ಮಾಡಬೇಕು.</verse>
				<verse number="7">ಆ ಏಳು ದಿವಸವು ಹಿಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು. ಮಾತ್ರವಲ್ಲ ನಿಮ್ಮ ಬಳಿಯಲ್ಲಿ ಅಥವಾ ನಿಮ್ಮ ನಾಡಿನಲ್ಲಿ ಹುಳಿಯಾಗಲಿ ಹುಳಿ ಹಿಟ್ಟಾಗಲಿ ಇರಕೂಡದು.</verse>
				<verse number="8">ಆ ದಿನ ನೀವು ನಿಮ್ಮ ಮಕ್ಕಳಿಗೆ, “ನಮ್ಮ ಜನರು ಈಜಿಪ್ಟಿನಿಂದ ಹೊರಟು ಬಂದಾಗ ಸರ್ವೇಶ್ವರ ನಮಗೋಸ್ಕರ ಮಾಡಿದ ಉಪಕಾರವನ್ನು ಸ್ಮರಿಸುವುದಕ್ಕಾಗಿ ಈ ಆಚರಣೆಯನ್ನು ನಡೆಸುತ್ತಿದ್ದೇವೆ” ಎಂದು ತಿಳಿಸಬೇಕು. ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದ್ದರಿಂದ ಅವರ ನಿಯಮ ನಮ್ಮ ಬಾಯಿಗೆ ಬರುತ್ತಿರಬೇಕು.</verse>
				<verse number="9">ಇದಕ್ಕೆ ಈ ಆಚರಣೆಯು ನಮ್ಮ ಕೈಗೆ ಕಟ್ಟಿದ ಕಂಕಣದಂತೆ, ಹಣೆಗೆ ಕಟ್ಟಿದ ಜ್ಞಾಪಕ ಪಟ್ಟಿಯಂತೆ ಇರುತ್ತದೆ.</verse>
				<verse number="10">ವರ್ಷವರ್ಷವೂ ನಿಯಮಿತ ಕಾಲದಲ್ಲಿ ಈ ಆಚರಣೆಯನ್ನು ನಡೆಸಬೇಕು.</verse>
				<verse number="11">“ಸರ್ವೇಶ್ವರ ಸ್ವಾಮಿ ನಿಮಗೂ ನಿಮ್ಮ ಪೂರ್ವಜರಿಗೂ ಕೊಟ್ಟ ವಾಗ್ದಾನದ ಮೇರೆಗೆ ನಿಮ್ಮನ್ನು ಕಾನಾನ್ಯರ ನಾಡಿಗೆ ಬರಮಾಡಿ ಆ ನಾಡನ್ನು ನಿಮಗೆ ಕೊಟ್ಟನಂತರ</verse>
				<verse number="12">ನಿಮಗೂ ನಿಮ್ಮ ಪಶುಪ್ರಾಣಿಗಳಿಗೂ ಹುಟ್ಟುವ ಚೊಚ್ಚಲು ಫಲವನ್ನೆಲ್ಲ, ಅವು ಗಂಡಾದ ಪಕ್ಷಕ್ಕೆ, ಸರ್ವೇಶ್ವರನ ಪಾಲೆಂದು ತಿಳಿದು ಅವರಿಗೆ ಸಮರ್ಪಿಸಬೇಕು.</verse>
				<verse number="13">ಆದರೆ ಕತ್ತೆಯ ಚೊಚ್ಚಲು ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೇಮರಿಯನ್ನು ಬಿಡಿಸಿಕೊಳ್ಳಬಹುದು; ಹಾಗೆ ಬಿಡಿಸಲಾಗದೆ ಹೋದರೆ ಅದರ ಕುತ್ತಿಗೆ ಮುರಿದು ಕೊಲ್ಲಬೇಕು. ಮನುಷ್ಯರ ಚೊಚ್ಚಲ ಗಂಡನ್ನಾದರೋ ಬದಲುಕೊಟ್ಟು ಬಿಡಿಸಿಕೊಳ್ಳಲೇಬೇಕು.</verse>
				<verse number="14">ಇನ್ನು ಮುಂದೆ ನಿಮ್ಮ ಮಕ್ಕಳು, ಇದರ ಅರ್ಥವೇನೆಂದು ವಿಚಾರಿಸುವಾಗ ನೀವು ಅವರಿಗೆ, ‘ನಾವು ಗುಲಾಮತನದಲ್ಲಿದ್ದಾಗ ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ಈಜಿಪ್ಟಿನಿಂದ ನಮ್ಮನ್ನು ಬಿಡುಗಡೆ ಮಾಡಿದರು.</verse>
				<verse number="15">ಫರೋಹನು ಹಟಹಿಡಿದು ನಮ್ಮನ್ನು ಹೋಗಗೊಡಿಸದೆ ಇದ್ದಾಗ ಸರ್ವೇಶ್ವರ ಈಜಿಪ್ಟಿನಲ್ಲಿದ್ದ ಚೊಚ್ಚಲು ಮಕ್ಕಳನ್ನು ಹಾಗು ಪಶುಪ್ರಾಣಿಗಳ ಚೊಚ್ಚಲು ಮರಿಗಳನ್ನೂ ಅಂತೂ ಈ ದೇಶದಲ್ಲಿ ಚೊಚ್ಚಲಾಗಿದ್ದುದೆಲ್ಲವನ್ನು ಸಂಹಾರ ಮಾಡಿದರು. ಆದಕಾರಣ ಗಂಡಾದ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಸರ್ವೇಶ್ವರನಿಗೆ ಸಮರ್ಪಿಸುತ್ತೇವೆ. ಮನುಷ್ಯರಿಗೆ ಹುಟ್ಟಿದ ಪ್ರಥಮ ಗರ್ಭಫಲವನ್ನಾದರೋ ಬದಲು ಕೊಟ್ಟು ಬಿಡಿಸಿಕೊಳ್ಳುತ್ತೇವೆ,” ಎಂದು ಹೇಳಬೇಕು.</verse>
				<verse number="16">ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಈ ಸಂದೇಶವನ್ನು ನೀವು ನೆನಪಿನಲ್ಲಿಡಬೇಕು. ಇದಕ್ಕೆ ಈ ಪದ್ಧತಿಯು ನಿಮ್ಮ ಕೈಗೆ ಕಟ್ಟಿದ ಕಂಕಣದಂತಿರುತ್ತದೆ, ಹಣೆಗೆ ಕಟ್ಟಿದ ಜ್ಞಾಪಕಪಟ್ಟಿಯಂತಿರುತ್ತದೆ.</verse>
				<verse number="17">ಫರೋಹನು ಇಸ್ರಯೇಲರಿಗೆ ಹೋಗಲು ಅಪ್ಪಣೆಕೊಟ್ಟಾಗ ದೇವರು ಅವರನ್ನು ಹತ್ತಿರವಾಗಿದ್ದ ಫಿಲಿಷ್ಟಿಯರ ಪ್ರಾಂತ್ಯದ ಮಾರ್ಗವಾಗಿ ಕರೆದುತರಲಿಲ್ಲ. ಬದಲಿಗೆ ಕೆಂಪು ಸಮುದ್ರದ ಬಳಿಯಿರುವ ಮರುಳುಗಾಡಿನ ಬಳಸು ದಾರಿಯಲ್ಲೇ ನಡೆಸಿಕೊಂಡು ಬಂದರು. ಏಕೆಂದರೆ, “ಯುದ್ಧ ತೊಡಗಿದರೆ ಇವರು ಎದೆಗೆಟ್ಟು ಈಜಿಪ್ಟಿಗೆ ಹಿಂದಿರುಗಿಯಾರು” ಎಂದುಕೊಂಡರು ದೇವರು.</verse>
				<verse number="18">ಇಸ್ರಯೇಲರು ಯುದ್ಧಸನ್ನದ್ಧ ಆಗಿಯೇ ಈಜಿಪ್ಟಿನಿಂದ ಹೊರಟರು.</verse>
				<verse number="19">ಇದಲ್ಲದೆ ಜೋಸೆಫನು ಇಸ್ರಯೇಲರಿಗೆ, “ಖಂಡಿತವಾಗಿ ದೇವರು ನಿಮ್ಮ ನೆರವಿಗೆ ಬರುವರು; ತಮ್ಮ ವಾಗ್ದಾನವನ್ನು ಈಡೇರಿಸುವರು. ನೀವು ಹೋಗುವಾಗ ನನ್ನ ಶವವನ್ನು ನಿಮ್ಮ ಸಂಗಡ ತೆಗೆದುಕೊಂಡು ಹೋಗಬೇಕು” ಎಂದು ಹೇಳಿ ಅವರಿಂದ ದೃಢಪ್ರಮಾಣ ಮಾಡಿಸಿದ್ದನು. ಆದುದರಿಂದಲೆ ಮೋಶೆ ಅವನ ಶವವನ್ನು ತನ್ನ ಸಂಗಡ ತೆಗೆದುಕೊಂಡು ಹೋದನು.</verse>
				<verse number="20">ಇಸ್ರಯೇಲರು ಸುಕ್ಕೋತಿನಿಂದ ಪ್ರಯಾಣಮಾಡಿ ಮರುಳುಗಾಡಿನ ಅಂಚಿನಲ್ಲಿರುವ ಏತಾಮಿನಲ್ಲಿ ಇಳಿದುಕೊಂಡರು.</verse>
				<verse number="21">ಸರ್ವೇಶ್ವರ ಸ್ವಾಮಿ ಅವರಿಗೆ ಹಗಲು ಹೊತ್ತಿನಲ್ಲಿ ದಾರಿತೋರಿಸಲು ಮೇಘಸ್ತಂಭ ರೂಪದಲ್ಲೂ ರಾತ್ರಿವೇಳೆಯಲ್ಲಿ ಬೆಳಕನ್ನೀಯಲು ಅಗ್ನಿಸ್ತಂಭ ರೂಪದಲ್ಲೂ ಅವರ ಮುಂದೆ ಸಾಗಿದರು. ಹೀಗೆ ಅವರು ಹಗಲಿರುಳು ಪ್ರಯಾಣ ಮಾಡಿದರು.</verse>
				<verse number="22">ಹಗಲಿನಲ್ಲಿ ಮೇಘಸ್ತಂಭ, ರಾತ್ರಿಯಲ್ಲಿ ಅಗ್ನಿಸ್ತಂಭ ತಪ್ಪದೆ ಕಾಣಿಸುತ್ತಿದ್ದವು.</verse>
			</chapter>
			<chapter number="14">
				<verse number="1">ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದರು:</verse>
				<verse number="2">ಇಸ್ರಯೇಲರು ಹಿಂತಿರುಗಿ ಹೋಗಿ ಪೀಹಹೀರೋತಿನ ಪೂರ್ವಕಡೆಯಲ್ಲಿ ಮಿಗ್ದೋಲಿಗೂ ಕೆಂಪುಸಮುದ್ರಕ್ಕೂ ನಡುವೆ ಬಾಳ್ಚೆಫೋನಿಗೆ ಎದುರಾಗಿ ಇಳಿದುಕೊಳ್ಳಬೇಕೆಂದು ಹೇಳು. ಅದರ ಎದುರಿಗೆ ಸಮುದ್ರದ ಬಳಿಯಲ್ಲೇ ಅವರು ಇಳಿದುಕೊಳ್ಳಬೇಕು.</verse>
				<verse number="3">ಫರೋಹನು ಅದನ್ನು ಕಂಡು, ‘ಇಸ್ರಯೇಲರಿಗೆ ದಾರಿತಪ್ಪಿತು, ಸುತ್ತಲೂ ಮರುಭೂಮಿ ಅವರನ್ನು ಆವರಿಸಿದೆ” ಎಂದುಕೊಳ್ಳುವನು.</verse>
				<verse number="4">ನಾನು ಫರೋಹನ ಹೃದಯವನ್ನು ಕಠಿಣವಾಗಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ಆ ಫರೋಹನನ್ನೂ ಅವನ ಸೈನ್ಯವನ್ನೂ ಗೆದ್ದು ನಾನು ಪ್ರಖ್ಯಾತಿ ಹೊಂದುವೆನು. ನಾನೇ ಸರ್ವೇಶ್ವರ ಎಂಬುದು ಈಜಿಪ್ಟಿನವರಿಗೆ ಗೊತ್ತಾಗುವುದು.” ಸರ್ವೇಶ್ವರನ ಆಜ್ಞೆಯಂತೆಯೇ ಇಸ್ರಯೇಲರು ನಡೆದುಕೊಂಡರು.</verse>
				<verse number="5">ಇತ್ತ ಫರೋಹನಿಗೆ ಇಸ್ರಯೇಲರು ಓಡಿಹೋದರೆಂಬ ಸುದ್ದಿ ಮುಟ್ಟಿತು. ಅವರ ಬಗ್ಗೆ ಅವನ ಹಾಗು ಅವನ ಪರಿವಾರದವರ ಮನಸ್ಸು ಮಾರ್ಪಟ್ಟಿತು. “ನಮಗೆ ಗುಲಾಮರಾಗಿದ್ದ ಇಸ್ರಯೇಲರನ್ನು ನಾವೇಕೆ ಹೋಗಗೊಟ್ಟೆವು?” ಎಂದು ನೊಂದುಕೊಂಡರು.</verse>
				<verse number="6">ಕೂಡಲೆ ಫರೋಹನು ತನ್ನ ರಥಬಲವನ್ನು ಸಜ್ಜುಗೊಳಿಸಿಕೊಂಡು ಸೈನ್ಯ ಸಮೇತನಾಗಿ ಹೊರಟನು.</verse>
				<verse number="7">ಈಜಿಪ್ಟಿನ ಎಲ್ಲ ರಥಗಳನ್ನೂ ಆರುನೂರು ಶ್ರೇಷ್ಠರಥಗಳನ್ನು ತೆಗೆದುಕೊಂಡು ಹೋದನು. ಈ ಎಲ್ಲ ರಥಗಳಲ್ಲಿ ಸೇನಾನಿಗಳಿದ್ದರು.</verse>
				<verse number="8">ಈಜಿಪ್ಟ್ ರಾಜ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣಪಡಿಸಿದ್ದರಿಂದ ಅವನು ಇಸ್ರಯೇಲರನ್ನು ಬೆನ್ನಟ್ಟಿಹೋದನು. ಇತ್ತ ಅಟ್ಟಹಾಸದಿಂದ ಹೊರಟಿದ್ದರು ಇಸ್ರಯೇಲರು.</verse>
				<verse number="9">ಈಜಿಪ್ಟಿನವರು, ಅಂದರೆ ಫರೋಹನ ಕುದುರೆಗಳು, ರಥಗಳು, ರಾಹುತರು, ಸೈನ್ಯದವರೆಲ್ಲರು ಅವನ ಹಿಂದೆ ಹೊರಟು ಇಸ್ರಯೇಲರ ಸಮೀಪಕ್ಕೆ ಬಂದರು; ಪೀಹಹೀರೋತಿನ ಬಳಿ ಬಾಳ್ಚೆಫೋನಿನ ಎದುರಾಗಿ ಸಮುದ್ರ ತೀರದಲ್ಲಿ ಇಳಿದುಕೊಳ್ಳುವಾಗಲೇ ಅವರ ಹತ್ತಿರಕ್ಕೆ ಬಂದರು.</verse>
				<verse number="10">ಫರೋಹನು ಸಮೀಪಿಸುತ್ತಿರುವುದನ್ನು ಇಸ್ರಯೇಲರು ಕಣ್ಣೆತ್ತಿ ನೋಡಿದರು. ತಮ್ಮನ್ನು ಬೆನ್ನಟ್ಟಿ ಬಂದಿದ್ದ ಈಜಿಪ್ಟಿನವರನ್ನು ಕಂಡು ಬಹಳವಾಗಿ ಭಯಪಟ್ಟು ಸರ್ವೇಶ್ವರನಿಗೆ ಮೊರೆಯಿಟ್ಟರು.</verse>
				<verse number="11">ಮೋಶೆಗೆ ಅವರು, “ಈಜಿಪ್ಟಿನಲ್ಲಿ ಸಮಾಧಿಗಳಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿಯೆಂದು ನಮ್ಮನ್ನು ಇಲ್ಲಿಗೆ ಕರೆದುತಂದಿರೋ? ಈಜಿಪ್ಟಿನಿಂದ ಕರೆದುಕೊಂಡು ಬಂದು ನಮಗೆ ಹೀಗೆ ಮಾಡಿಬಿಟ್ಟಿದ್ದೇಕೆ?</verse>
				<verse number="12">ನಾವು ಈಜಿಪ್ಟಿನಲ್ಲಿರುವಾಗಲೇ, ‘ನಮ್ಮ ಗೊಡವೆಗೆ ಬರಬೇಡಿ, ನಾವು ಈಜಿಪ್ಟಿನವರಿಗೆ ಗುಲಾಮರಾಗಿಯೇ ಇರುತ್ತೇವೆ,” ಎಂದು ನಿಮಗೆ ನಾವು ಹೇಳಲಿಲ್ಲವೆ? ನಾವು ಈ ಮರುಭೂಮಿಯಲ್ಲಿ ಸಾಯುವುದಕ್ಕಿಂತ ಈಜಿಪ್ಟಿನವರಿಗೆ ಗುಲಾಮರಾಗಿರುವುದೇ ಮೇಲಲ್ಲವೇ?” ಎಂದು ದೂರಿದರು.</verse>
				<verse number="13">ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ, ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ.</verse>
				<verse number="14">ಸರ್ವೇಶ್ವರ ಸ್ವಾಮಿಯೇ ನಿಮ್ಮ ಪರವಾಗಿ ಯುದ್ಧಮಾಡುವರು. ನೀವು ನೆಮ್ಮದಿಯಿಂದಿರಿ,” ಎಂದು ಹೇಳಿದನು.</verse>
				<verse number="15">ಆಗ ಸರ್ವೇಶ್ವರ: “ನೀನೇಕೆ ನನಗೆ ಮೊರೆಯಿಡುತ್ತಿರುವೆ? ಮುಂದಕ್ಕೆ ಹೊರಡಬೇಕೆಂದು ಇಸ್ರಯೇಲರಿಗೆ ಹೇಳು.</verse>
				<verse number="16">ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಚಾಚಿ ಅದನ್ನು ವಿಭಾಗಿಸು; ಆಗ ಇಸ್ರಯೇಲರು ಸಮುದ್ರದ ಮಧ್ಯೆ ಒಣಗಿದ ನೆಲದ ಮೇಲೆ ನಡೆದುಹೋಗುವರು.</verse>
				<verse number="17">ನಾನು ಈಜಿಪ್ಟಿನವರ ಹೃದಯಗಳನ್ನು ಕಠಿಣಪಡಿಸುವೆನು, ಎಂದೇ ಅವರು ಇವರ ಹಿಂದೆ ಸಮುದ್ರದೊಳಕ್ಕೆ ಹೋಗುವರು. ಆಗ, ನಾನು ಫರೋಹನ್ನು ಅವನ ಸಮಸ್ತ ಸೈನ್ಯವನ್ನೂ, ರಥಗಳನ್ನೂ ಹಾಗು</verse>
				<verse number="18">ರಾಹುತರನ್ನು ಸೋಲಿಸಿ ಪ್ರಖ್ಯಾತಿ ಹೊಂದಿದ ನಂತರ ನಾನೇ ಸರ್ವೇಶ್ವರ ಎಂಬುದನ್ನು ಈಜಿಪ್ಟಿನವರು ತಿಳಿದುಕೊಳ್ಳುವರು,” ಎಂದರು ಮೋಶೆಗೆ.</verse>
				<verse number="19">ಇಸ್ರಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ಸ್ಥಳ ಬದಲಾಯಿಸಿ ಅವರ ಹಿಂದಕ್ಕೆ ಬಂದನು. ಅವರ ಮುಂಭಾಗದಲ್ಲಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.</verse>
				<verse number="20">ಆ ಮೇಘಸ್ತಂಭವು ಈಜಿಪ್ಟಿನವರ ಪಡೆಗೂ ಇಸ್ರಯೇಲರ ಪಡೆಗೂ ನಡುವೆ ಬಂದು ಈಜಿಪ್ಟಿನವರಿಗೆ ಕತ್ತಲೆಯನ್ನುಂಟುಮಾಡಿತು; ಇಸ್ರಯೇಲರಿಗೆ ರಾತ್ರಿಯನ್ನು ಬೆಳಕಾಗಿಸಿತು. ಈ ಕಾರಣ ಆ ರಾತ್ರಿಯೆಲ್ಲಾ ಒಂದು ಪಡೆಯವರು ಇನ್ನೊಂದು ಪಡೆಯವರ ಬಳಿಗೆ ಬರಲಾಗಲಿಲ್ಲ.</verse>
				<verse number="21">ಮೋಶೆ ಸಮುದ್ರದ ಮೇಲೆ ಕೈ ಚಾಚಿದಾಗ ಸರ್ವೇಶ್ವರ ಸ್ವಾಮಿ ಆ ರಾತ್ರಿಯೆಲ್ಲಾ ಪೂರ್ವದಿಕ್ಕಿನಿಂದ ಬಲವಾದ ಬಿರುಗಾಳಿ ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದುಕಡೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದರು. ನೀರು ಇಬ್ಭಾಗವಾಯಿತು.</verse>
				<verse number="22">ಇಸ್ರಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತು.</verse>
				<verse number="23">ಈಜಿಪ್ಟಿನವರು, ಅಂದರೆ ಫರೋಹನ ಕುದುರೆಗಳು, ರಥಗಳು, ರಾಹುತರು ಇಸ್ರಯೇಲರನ್ನು ಬೆನ್ನಟ್ಟಿ ಬಂದು ಅವರ ಹಿಂದೆಯೇ ಸಮುದ್ರದೊಳಗೆ ಹೋದರು.</verse>
				<verse number="24">ಬೆಳಗಿನ ಜಾವದಲ್ಲಿ ಸರ್ವೇಶ್ವರ ಆ ಅಗ್ನಿಸ್ತಂಭದಿಂದ ಈಜಿಪ್ಟಿನವರ ದಂಡಿನ ಕಡೆಗೆ ನೋಡಿ ಅದನ್ನು ಗಲಿಬಿಲಿ ಮಾಡಿದರು.</verse>
				<verse number="25">ಸರ್ವೇಶ್ವರ ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಈಜಿಪ್ಟಿನವರು ಬಹುಕಷ್ಟದಿಂದ ಅವುಗಳನ್ನು ಸಾಗಿಸಿಕೊಂಡು ಹೋದರು. ಆಗ ಈಜಿಪ್ಟಿನವರು, “ನಾವು ಇಸ್ರಯೇಲರ ಮುಂದೆ ಗೆಲ್ಲಲಾರೆವು. ಓಡಿಹೋಗೋಣ ಬನ್ನಿ; ಸರ್ವೇಶ್ವರನು ಅವರ ಪರವಾಗಿ, ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನೆ,” ಎಂದುಕೊಂಡರು.</verse>
				<verse number="26">ಅಷ್ಟರಲ್ಲಿ ಸರ್ವೇಶ್ವರ, “ಸಮುದ್ರದ ಮೇಲೆ ನಿನ್ನ ಕೈಚಾಚು; ಆಗ ಅದರ ನೀರು ಮೊದಲಿನಂತೆ ಬಂದು ಈಜಿಪ್ಟಿನವರನ್ನೂ ಅವರ ರಥಗಳನ್ನೂ, ರಾಹುತರನ್ನೂ ಮುಳುಗಿಸುವುದು,” ಎಂದು ಮೋಶೆಗೆ ಹೇಳಿದರು.</verse>
				<verse number="27">ಅಂತೆಯೇ ಮೋಶೆ ಸಮುದ್ರದ ಮೇಲೆ ಕೈ ಚಾಚಿದನು. ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಂಡಿತು. ಈಜಿಪ್ಟಿನವರು ಓಡಿಹೋಗುತ್ತಾ ಅದಕ್ಕೆ ಎದುರಾಗಿಯೇ ಬಂದರು. ಹೀಗೆ ಸರ್ವೇಶ್ವರ ಈಜಿಪ್ಟಿನವರನ್ನು ಸಮುದ್ರದೊಳಗೆ ಕೆಡವಿಬಿಟ್ಟರು.</verse>
				<verse number="28">ನೀರು ಮೊದಲಿನಂತೆ ಬಂದು ಆ ರಥಗಳನ್ನು, ರಾಹುತರನ್ನು ಹಾಗು ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನು ಮುಳುಗಿಸಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.</verse>
				<verse number="29">ಇಸ್ರಯೇಲರಾದರೋ, ಸಮುದ್ರದೊಳಗೆ ಒಣ ನೆಲದಲ್ಲೇ ನಡೆದುಹೋದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತ್ತು.</verse>
				<verse number="30">ಆ ದಿನ ಸರ್ವೇಶ್ವರ ಸ್ವಾಮಿ ಇಸ್ರಯೇಲರನ್ನು ಈಜಿಪ್ಟಿನವರ ಕೈಯಿಂದ ರಕ್ಷಿಸಿದರು. ಈಜಿಪ್ಟಿನವರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಯೇಲರು ಕಂಡರು.</verse>
				<verse number="31">ಸರ್ವೇಶ್ವರ ಈಜಿಪ್ಟಿನವರಲ್ಲಿ ಮಾಡಿದ ಈ ಪರಾಕ್ರಮ ಕಾರ್ಯವನ್ನು ಇಸ್ರಯೇಲರು ನೋಡಿ ಸರ್ವೇಶ್ವರನಿಗೆ ಭಯಪಟ್ಟು ಅವರಲ್ಲೂ ಅವರ ದಾಸ ಮೋಶೆಯಲ್ಲೂ ನಂಬಿಕೆಯಿಟ್ಟರು.</verse>
			</chapter>
			<chapter number="15">
				<verse number="1">ಆಗ ಮೋಶೆ ಮತ್ತು ಇಸ್ರಯೇಲರು ಸರ್ವೇಶ್ವರ ಸ್ವಾಮಿಗೆ ಸ್ತೋತ್ರವಾಗಿ ಈ ಕೀರ್ತನೆಯನ್ನು ಹಾಡಿದರು: “ಮಾಡೋಣ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕುದುರೆಗಳನು ರಾಹುತರನು ಕಡಲಲ್ಲಿ ಕೆಡವಿ ನಾಶಮಾಡಿಹನು</verse>
				<verse number="2">ಸರ್ವೇಶ್ವರನೇ ನನ್ನ ಶಕ್ತಿ, ನನ್ನ ಗೀತೆ! ಆತನಿಂದಲೇ ನನಗೆ ದೊರಕಿತು ರಕ್ಷಣೆ. ಆತನನ್ನು ವರ್ಣಿಸುವೆನು, ಆತನೆನ್ನ ದೇವನು ಆತನನ್ನು ಸ್ತುತಿಸುವೆನು, ಆತನೆನ್ನ ಪಿತೃಗಳ ದೇವನು.</verse>
				<verse number="3">ಸರ್ವೇಶ್ವರನು ಯುದ್ಧಶೂರನು ‘ಸರ್ವೇಶ್ವರ’ ಎಂಬುದು ಆತನ ನಾಮಧೇಯವು.</verse>
				<verse number="4">ಫರೋಹನ ರಥಗಳನು, ಸೈನಿಕರನು ಕೆಡವಿಬಿಟ್ಟನಾತ ಕಡಲಲಿ ಫರೋಹನ ವೀರ ಶ್ರೇಷ್ಟರನು ಮುಳುಗಿಸಿಬಿಟ್ಟನಾತ ಕೆಂಪು ಸಮುದ್ರದಲಿ</verse>
				<verse number="5">ಮುಚ್ಚಿಬಿಟ್ಟಿತವರನು ಸಮುದ್ರ ಸಾಗರವು ಸೇರಿದರವರು ಕಲ್ಲಿನೋಪಾದಿ ಕಡಲಿನ ತಳವನು.</verse>
				<verse number="6">ಹೇ ಸರ್ವೇಶ್ವರಾ, ನಿನ್ನ ಭುಜಬಲ ಶಕ್ತಿಯುತ! ಪುಡಿ ಪುಡಿ ಮಾಡಿತು ನಿನ್ನ ಶತ್ರುಗಳನು ಆ ಬಾಹುಬಲ!</verse>
				<verse number="7">ನಿನ್ನೆದುರಾಳಿಗಳನು ಕೆಡವಿಬಿಡುತಿ ಮಹಾ ತೇಜಸ್ವಿಯಾಗಿ ಒಣಹುಲ್ಲಂತೆ ಭಸ್ಮಮಾಡುತಿ ಅವರನು ಕೋಪಾಗ್ನಿಯಾಗಿ.</verse>
				<verse number="8">ಸಿಟ್ಟಿನಿಂದ ನೀ ಮುಸುಗೆರೆದಾಗಲೆ ಸಮುದ್ರವಾಯಿತು ನೀರೊಡ್ಡಿನಂತೆ ಪ್ರವಾಹ ನಿಂತಿತು ಗೋಡೆಯಂತೆ ಸಾಗರ (ಗರ್ಭ) ದೊಳಗಿನ ಜಲ ಗಟ್ಟಿಯಾಯಿತು ನೆಲದಂತೆ.</verse>
				<verse number="9">ನಮ್ಮ ಶತ್ರುಗಳು ಮಾತಾಡಿಕೊಂಡರು ಇಂತೆಂದು: ‘ಹಿಂದಟ್ಟಿ ಹಿಡಿಯುವೆವು ಅವರನು ಅಪಹರಿಸಿಕೊಳ್ವೆವು ಅವರ ಸೊತ್ತನು ತೀರಿಸಿಕೊಳ್ವೆವು ಅವರಲ್ಲಿ ನಮ್ಮ ಬಯಕೆಯನು ಶಕ್ತಿಯಿಂದ ಸಂಹರಿಸುವೆವು ಅವರನು ಕತ್ತಿ ಹಿಡಿದು.’</verse>
				<verse number="10">ಆದರೆ ನಿನ್ನದೊಂದು ಉಸಿರುಗಾಳಿ ಸಾಕಾಯಿತು ಅವರು ಸೀಸದ ಗುಂಡಿನಂತೆ ಮುಳುಗಿ ಹೋಗಲು. ಅವರನ್ನು ಸಮುದ್ರವು ನುಂಗಿಬಿಡಲು</verse>
				<verse number="11">ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?</verse>
				<verse number="12">ಭುವಿ ಬಾಯ್ದೆರೆದು ನುಂಗಿತು ಹಗೆಗಳನು ನೀ ನಿನ್ನ ಬಲಗೈಯನ್ನು ಚಾಚಲು.</verse>
				<verse number="13">ನೀ ಬಿಡುಗಡೆ ಮಾಡಿದ ಜನರನ್ನು ನಡೆಸಿಕೊಂಡೆ ಪ್ರೀತಿಯಿಂದ ನಿನ್ನ ಶ್ರೀನಿವಾಸದ ತನಕ ಅವರನ್ನು ಬರಮಾಡಿದೆ ಶಕ್ತಿಯಿಂದ.</verse>
				<verse number="14">ಇದನ್ನು ಕೇಳಿ ನಡುಗುತ್ತಿರುವುವು ಜನಾಂಗಗಳು ಪ್ರಸವವೇದನೆ ಪಡುತ್ತಿರುವರು ಫಿಲಿಷ್ಟಿಯರು.</verse>
				<verse number="15">ಕಳವಳಗೊಂಡರು ಎದೋಮ್ಯರ ಕುಲನಾಯಕರು ಗಡಗಡನೆ ನಡುಗುತ್ತಿಹರು ಮೋವಾಬ್ಯರ ಮುಖಂಡರು. ಕರಗಿ ನೀರಾಗಿ ಹೋದರು ಕಾನಾನ್ ನಾಡಿನವರು.</verse>
				<verse number="16">ಭಯಭೀತಿ ಅವರನ್ನು ಆವರಿಸಿದೆ ನಿನ್ನ ಭುಜಬಲ ನೋಡಿ ಸ್ತಬ್ದರಾಗಿಹರವರು ಕಲ್ಲಿನಂತೆ.</verse>
				<verse number="17">ನಿನ್ನ ಸ್ವಂತ ನಾಡಾದ ಆ ಬೆಟ್ಟದ ಸೀಮೆಗೆ ನೀನವರನ್ನು ತಂದು ನೆಲೆಗೊಳಿಸುವೆ. ನಿನ್ನ ನಿವಾಸಕ್ಕಾಗಿ ನೀನಾರಿಸಿಕೊಂಡಾ ಸ್ಥಳಕ್ಕೆ ನೀ ಸಿದ್ಧಪಡಿಸಿಕೊಂಡಿರುವಾ ಪವಿತ್ರಾಲಯಕ್ಕೆ ಹೇ ಸರ್ವೇಶ್ವರಾ, ನೀನವರನ್ನು ಬರಮಾಡುವೆ.</verse>
				<verse number="18">ಯುಗಯುಗಾಂತರಕ್ಕೂ ರಾಜ್ಯವಾಳುವವನು ಸರ್ವೇಶ್ವರನೇ!</verse>
				<verse number="19">ಫರೋಹನ ಕುದುರೆಗಳು, ರಥಗಳು ಹಾಗು ರಾಹುತರು ಸಮುದ್ರವನ್ನು ಹೊಕ್ಕು ನಡೆಯಲಾರಂಭಿಸಿದಾಗ ಸರ್ವೇಶ್ವರ ಸ್ವಾಮಿ ಸಮುದ್ರದ ನೀರನ್ನು ಮೊದಲಿನಂತೆ ಬರಮಾಡಿ ಅವರನ್ನು ಮುಳುಗಿಸಿಬಿಟ್ಟರು. ಇಸ್ರಯೇಲರಾದರೋ, ಸಮುದ್ರದ ನಡುವೆ ಒಣನೆಲದಲ್ಲಿ ನಡೆದು ಹೋದರು.</verse>
				<verse number="20">ಆರೋನನ ಅಕ್ಕ ಮಿರ್ಯಾಮಳು ಒಬ್ಬ ಪ್ರವಾದಿನಿ. ಆಕೆ ತಮ್ಮಟೆಯನ್ನು ಕೈಗೆ ತೆಗೆದುಕೊಂಡಳು. ಮಹಿಳೆಯರೆಲ್ಲರು ತಮ್ಮಟೆ ಹಿಡಿದು ನಾಟ್ಯವಾಡುತ್ತಾ ಆಕೆಯ ಹಿಂದೆ ಹೊರಟರು.</verse>
				<verse number="21">ಮಿರ್ಯಾಮಳು ಅವರ ಹಾಡಿಗೆ ಈ ಪಲ್ಲವಿಯನ್ನು ಕೂಡಿಸಿದಳು: ಮಾಡಿರಿ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕಡಲಲ್ಲಿ ಕೆಡವಿ ನಾಶಮಾಡಿಹನು ಕುದುರೆಗಳನು, ರಾಹುತರನು</verse>
				<verse number="22">ಬಳಿಕ ಮೋಶೆ ಇಸ್ರಯೇಲರನ್ನು ಕೆಂಪು ಸಮುದ್ರದ ಬಳಿಯಿಂದ ಕರೆದುಕೊಂಡು ಹೋದನು. ಅವರು ಶೂರ್ ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಬೇಕಾಯಿತು. ಅಲ್ಲಿ ಅವರಿಗೆ ನೀರು ಸಿಕ್ಕಲೇ ಇಲ್ಲ.</verse>
				<verse number="23">ತರುವಾಯ ‘ಮಾರಾ’ ಎಂಬ ಸ್ಥಳವನ್ನು ತಲುಪಿದರು. ಅಲ್ಲಿ ನೀರು ಸಿಕ್ಕಿತಾದರೂ ಅದು ಕಹಿಯಾಗಿತ್ತು. ಅದನ್ನು ಕುಡಿಯುವುದಕ್ಕೆ ಆಗದೆ ಹೋಯಿತು. ಆದ್ದರಿಂದ ಆ ಸ್ಥಳಕ್ಕೆ ‘ಮಾರಾ’ ಎಂದು ಹೆಸರಾಯಿತು.</verse>
				<verse number="24">“ನಾವೇನು ಕುಡಿಯಬೇಕು?” ಎಂದು ಜನರು ಮೋಶೆಯ ಮೇಲೆ ಗೊಣಗುಟ್ಟ ತೊಡಗಿದರು.</verse>
				<verse number="25">ಮೋಶೆ ಸರ್ವೇಶ್ವರ ಸ್ವಾಮಿಯನ್ನು ಪ್ರಾರ್ಥಿಸಿದನು. ಆಗ ಸರ್ವೇಶ್ವರ ಅವನಿಗೆ ಒಂದು ಗಿಡವನ್ನು ತೋರಿಸಿದರು. ಅದನ್ನು ಆ ನೀರಿನಲ್ಲಿ ಹಾಕಿದಾಗ ನೀರು ಸಿಹಿಯಾಯಿತು.</verse>
				<verse number="26">ಅಲ್ಲಿ ಸರ್ವೇಶ್ವರ ಇಸ್ರಯೇಲರಿಗೆ ಒಂದು ನಿಯಮವನ್ನು ಕೊಟ್ಟರು. ಅದು ಮಾತ್ರವಲ್ಲ, ಅವರನ್ನು ಪರೀಕ್ಷಿಸಿದರು. ಅವರಿಗೆ, “ನೀವು ನಿಮ್ಮ ದೇವರಾದ ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ, ನನ್ನ ದೃಷ್ಟಿಗೆ ಸರಿಬೀಳುವುದನ್ನೆ ಮಾಡಿ ನನ್ನ ಆಜ್ಞೆಗಳಿಗೆ ವಿಧೇಯರಾಗಿದ್ದು, ನನ್ನ ಕಟ್ಟಳೆಗಳನ್ನೆಲ್ಲ ಅನುಸರಿಸಿ ನಡೆದರೆ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಮಾಡುವುದಿಲ್ಲ. ಸರ್ವೇಶ್ವರನೆಂಬ ನಾನೇ ನಿಮಗೆ ಆರೋಗ್ಯದಾಯಕ,” ಎಂದರು.</verse>
				<verse number="27">ಅಲ್ಲಿಂದ ಆ ಜನರು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದವು. ಆದ್ದರಿಂದ ಆ ನೀರಿನ ಬಳಿಯಲ್ಲೇ ಇಳಿದುಕೊಂಡರು.</verse>
			</chapter>
			<chapter number="16">
				<verse number="1">ಇಸ್ರಯೇಲರ ಸಮಾಜ ಏಲೀಮಿನಿಂದ ಹೊರಟ ಮೇಲೆ, ಏಲೀಮಿಗೂ ಸಿನಾಯಿ ಬೆಟ್ಟಕ್ಕೂ ನಡುವೆಯಿರುವ ‘ಸೀನ್’ ಎಂಬ ಮರುಭೂಮಿಗೆ ಬಂದರು. ಈಜಿಪ್ಟನ್ನು ಬಿಟ್ಟು ಬಂದ ಎರಡನೆಯ ತಿಂಗಳಿನ ಹದಿನೈದನೆಯ ದಿನ ಅದು.</verse>
				<verse number="2">ಮರುಭೂಮಿಯಲ್ಲಿ ಇಸ್ರಯೇಲರ ಸಮಾಜವೆಲ್ಲ ಮೋಶೆ ಮತ್ತು ಆರೋನರ ವಿರುದ್ಧ ಗೊಣಗುಟ್ಟಿತು.</verse>
				<verse number="3">“ಈ ಸಮಾಜವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ಈ ಮರುಭೂಮಿಗೆ ನಮ್ಮನ್ನು ಕರೆದು ತಂದಿದ್ದೀರಿ; ನಾವು ಈಜಿಪ್ಟಿನಲ್ಲಿದ್ದಾಗ ಸರ್ವೇಶ್ವರನ ಕೈಯಿಂದಲೆ ಸತ್ತಿದ್ದರೆ ಎಷ್ಟೊ ಲೇಸಾಗಿತ್ತು. ಆಗ ಮಾಂಸ ಪಾತ್ರೆಗಳ ಪಕ್ಕದಲ್ಲೇ ಕುಳಿತು ಹೊಟ್ಟೇ ತುಂಬ ಊಟಮಾಡುತ್ತಿದ್ದೆವು,” ಎಂದು ಗುಣಗಿದರು.</verse>
				<verse number="4">ಆಗ ಸರ್ವೇಶ್ವರ, “ಇಗೋ ನೋಡು, ಆಕಾಶದಿಂದ ನಿಮಗೋಸ್ಕರ ಆಹಾರವನ್ನು ಸುರಿಸುವೆನು. ಈ ಜನರು ಪ್ರತಿದಿನವು ಹೊರಗೆ ಹೋಗಿ ಆಯಾ ದಿನಕ್ಕೆ ಬೇಕಾದಷ್ಟು ಮಾತ್ರ ಕೂಡಿಸಿಕೊಳ್ಳಬೇಕು. ನನ್ನ ಕಟ್ಟಳೆಯ ಪ್ರಕಾರ ನಡೆಯುವರೋ ಇಲ್ಲವೋ ಎಂದು ಇದರಿಂದ ಪರೀಕ್ಷಿಸಿ ತಿಳಿಯುತ್ತೇನೆ.</verse>
				<verse number="5">ಆರನೆಯ ದಿನದಲ್ಲಿ ಮಾತ್ರ ಪ್ರತಿದಿನ ಕೂಡಿಸಿದ್ದಕ್ಕಿಂತಲೂ ಎರಡರಷ್ಟು ಕೂಡಿಸಿ ಸಿದ್ಧಪಡಿಸಿಕೊಳ್ಳಬೇಕು,” ಎಂದು ಹೇಳಿದರು.</verse>
				<verse number="6">ಮೋಶೆ ಮತ್ತು ಆರೋನರು ಇಸ್ರಯೇಲರೆಲ್ಲರನ್ನು ಉದ್ದೇಶಿಸಿ, “ನಿಮ್ಮನ್ನು ಈಜಿಪ್ಟಿನಿಂದ ಬಿಡಿಸಿದವರು ಸರ್ವೇಶ್ವರ ಸ್ವಾಮಿಯೇ ಎಂಬುದು ಈ ಸಂಜೆ ನಿಮಗೆ ಗೊತ್ತಾಗುವುದು.</verse>
				<verse number="7">ಬೆಳಿಗ್ಗೆಯೂ ಸ್ವಾಮಿಯ ತೇಜಸ್ಸು ನಿಮಗೆ ಕಾಣಬರುವುದು. ನೀವು ಸರ್ವೇಶ್ವರನ ವಿರುದ್ಧ ಗೊಣಗುಟ್ಟಿದ ಮಾತುಗಳು ಅವರಿಗೆ ಕೇಳಿಸಿವೆ. ನಾವು ಎಷ್ಟು ಮಾತ್ರದವರು ನೀವು ನಮ್ಮ ವಿರುದ್ಧ ಗೊಣಗುಟ್ಟಲು?” ಎಂದರು.</verse>
				<verse number="8">ಮೋಶೆ, “ಸಂಜೆ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನು ಕೊಡುವವರು ಸರ್ವೇಶ್ವರ. ನಾವು ಎಷ್ಟು ಮಾತ್ರದವರು? ಗೊಣಗುಟ್ಟುವ ನಿಮ್ಮ ಮಾತುಗಳು ಸರ್ವೇಶ್ವರನಿಗೆ ಕೇಳಿಸಿವೆ. ಆ ಗೊಣಗುಟ್ಟುವಿಕೆ ಸರ್ವೇಶ್ವರನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ,” ಎಂದನು.</verse>
				<verse number="9">ಆರೋನನಿಗೆ ಮೋಶೆ, “ನೀನು ಇಸ್ರಯೇಲ್ ಸಮಾಜದ ಬಳಿಗೆ ಹೋಗಿ, ಅವರಿಗೆ, ‘ಸರ್ವೇಶ್ವರ ನಿಮ್ಮ ಗೊಣಗಾಟವನ್ನು ಕೇಳಿದ್ದಾರೆ. ಆದ್ದರಿಂದ ನೀವೆಲ್ಲರು ಅವರ ಸನ್ನಿಧಿಗೆ ಕೂಡಿಬರಬೇಕು, ಎಂದು ಆಜ್ಞಾಪಿಸು,” ಎಂದು ಹೇಳಿದನು.</verse>
				<verse number="10">ಅಂತೆಯೇ ಆರೋನನು ಇಸ್ರಯೇಲರ ಸಮಾಜಕ್ಕೆಲ್ಲ ಈ ಮಾತುಗಳನ್ನು ತಿಳಿಸುತ್ತಿರುವಾಗ ಆ ಜನರು ಮರುಭೂಮಿಯ ಕಡೆಗೆ ನೋಡಿದರು. ಆಗ ಇಗೋ, ಮೇಘದಲ್ಲಿ ಸರ್ವೇಶ್ವರನ ತೇಜಸ್ಸು ಅವರಿಗೆ ಕಾಣಿಸಿತು:</verse>
				<verse number="11">ಸರ್ವೇಶ್ವರ ಮೋಶೆಯ ಸಂಗಡ ಮಾತಾಡಿ ಹೀಗೆಂದರು:</verse>
				<verse number="12">ಇಸ್ರಯೇಲರ ಗೊಣಗಾಟ ನನಗೆ ಕೇಳಿಸಿತು. ಅವರಿಗೆ, ‘ಸಂಜೆ ಮಾಂಸವನ್ನೂ ಬೆಳಿಗ್ಗೆ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ; ಇದರಿಂದ ನಾನು ನಿಮ್ಮ ದೇವರಾದ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು’ ಎಂದು ಹೇಳು,” ಎಂದರು.</verse>
				<verse number="13">ಸಂಜೆಯಾಗುತ್ತಲೆ ಲಾವಕ್ಕಿಗಳು ಬಂದು ಅವರ ಪಾಳೆಯವನ್ನು ಮುಚ್ಚಿಕೊಂಡವು. ಬೆಳಿಗ್ಗೆ ಪಾಳೆಯದ ಸುತ್ತಲೂ ಮಂಜು ಬಿದ್ದಿತು.</verse>
				<verse number="14">ಆ ಮಂಜು ಆರಿಹೋದ ನಂತರ ಮರುಭೂಮಿಯ ನೆಲದಲ್ಲಿ ಮಂಜಿನ ಹನಿಗಳಂತೆ ಏನೋ ಸಣ್ಣ ಸಣ್ಣ ರವೆಗಳು ಕಾಣಿಸಿದವು.</verse>
				<verse number="15">ಇಸ್ರಯೇಲರು ಅದನ್ನು ಕಂಡು ಇಂಥದೆಂದು ತಿಳಿಯದೆ ಒಬ್ಬರಿಗೊಬ್ಬರು ‘ಮನ್ನ’ ಎಂದರು. ಇದೇನಿರಬಹುದೆಂದು ವಿಚಾರಿಸಿದರು ಮೋಶೆ ಅವರಿಗೆ, “ಇದು ಸರ್ವೇಶ್ವರ ಸ್ವಾಮಿ ನಿಮಗೋಸ್ಕರ ಕೊಟ್ಟ ಆಹಾರ.</verse>
				<verse number="16">ಇದರ ವಿಷಯದಲ್ಲಿ ಅವರು ನಿಮಗೆ ಆಜ್ಞಾಪಿಸುವುದನ್ನು ಕೇಳಿ; ‘ಪ್ರತಿಯೊಬ್ಬನು ತನ್ನ ಕುಟುಂಬದ ಸಂಖ್ಯಾನುಸಾರ ತಲೆಗೆ ಮೂರು ಸೇರಂತೆ, ಅಂದರೆ ಒಬ್ಬೊಬ್ಬನು ಸರಾಸರಿ ತಿನ್ನುವಷ್ಟನ್ನು ತನ್ನ ಡೇರೆಯಲ್ಲಿರುವವರಿಗಾಗಿ ಕೂಡಿಸಿಕೊಳ್ಳಲಿ,” ಎಂದು ಹೇಳಿದನು.</verse>
				<verse number="17">ಇಸ್ರಯೇಲರು ಹಾಗೆಯೇ ಮಾಡಿ ಕೆಲವರು ಹೆಚ್ಚಾಗಿ, ಕೆಲವರು ಕಡಿಮೆಯಾಗಿ ಕೂಡಿಸಿಕೊಂಡು ಸೇರಿನಿಂದ ಅಳತೆಮಾಡಿದರು.</verse>
				<verse number="18">ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ. ಪ್ರತಿಯೊಬ್ಬನು ತನ್ನ ಭೋಜನಕ್ಕೆ ಸರಿಯಾಗಿಯೇ ಕೂಡಿಸಿಕೊಂಡಿದ್ದನು.</verse>
				<verse number="19">ಇದಲ್ಲದೆ ಮೋಶೆ ಅವರಿಗೆ, “ಯಾರೂ ಇದನ್ನು ಮಾರನೆ ದಿನದ ತನಕ ಇಟ್ಟುಕೊಳ್ಳಕೂಡದು,” ಎಂದು ಹೇಳಿದನು.</verse>
				<verse number="20">ಆದಾಗ್ಯೂ ಅವರಲ್ಲಿ ಕೆಲವರು ಮೋಶೆಯ ಮಾತನ್ನು ಕೇಳದೆ ಅದರಲ್ಲಿ ಸ್ವಲ್ಪವನ್ನು ಮರುದಿವಸದ ತನಕ ಇಟ್ಟುಕೊಂಡರು. ಆಗ ಅದು ಹುಳು ಬಿದ್ದು, ನಾತಹಿಡಿದು, ಕೆಟ್ಟುಹೋಯಿತು. ಅದಕ್ಕೆ ಮೋಶೆ ಅವರ ಮೇಲೆ ಸಿಟ್ಟುಗೊಂಡನು.</verse>
				<verse number="21">ಜನರು ತಮ್ಮ ತಮ್ಮ ಊಟಕ್ಕೆ ತಕ್ಕಷ್ಟನ್ನು ದಿನದಿನವೂ ಬೆಳಿಗ್ಗೆ ಹೊತ್ತು ಕೂಡಿಸಿಕೊಂಡರು. ಬಿಸಿಲು ಏರಿದಾಗ ಮಿಕ್ಕದ್ದು ಕರಗಿಹೋಗುತ್ತಿತ್ತು.</verse>
				<verse number="22">ಆರನೆಯ ದಿನ ಎರಡಷ್ಟು ಆಹಾರವನ್ನು ಅಂದರೆ ಒಬ್ಬೊಬ್ಬನಿಗೆ ಎರಡೆರಡು ಹೋಮೆರಿನ ಮೇರೆಗೆ ಕೂಡಿಸಿಕೊಂಡರು. ಆದ್ದರಿಂದ ಸಮಾಜದ ಅಧಿಕಾರಿಗಳೆಲ್ಲರು ಮೋಶೆಯ ಬಳಿಗೆ ಬಂದು ಈ ಸಂಗತಿಯನ್ನು ವರದಿಮಾಡಿದರು.</verse>
				<verse number="23">ಅದಕ್ಕೆ ಮೋಶೆ, “ಇದು ಸರ್ವೇಶ್ವರ ಹೇಳಿದ ಮಾತು. ನಾಳೆ ವಿಶ್ರಾಂತಿಯ ದಿನ, ಸರ್ವೇಶ್ವರನ ಪರಿಶುದ್ಧ ‘ಸಬ್ಬತ್’ ದಿನ. ಆಹಾರಕ್ಕೆ ಸುಡಬೇಕಾದುದನ್ನು ಸುಟ್ಟು, ಬೇಯಿಸಬೇಕಾದುದನ್ನು ಬೇಯಿಸಿದ ನಂತರ ಮಿಕ್ಕಿದ್ದನ್ನು ನಾಳೆಯ ತನಕ ಇಟ್ಟುಕೊಳ್ಳಿ,” ಎಂದನು.</verse>
				<verse number="24">ಮೋಶೆ ಆಜ್ಞಾಪಿಸಿದಂತೆ ಅವರು ಮರುದಿನದ ತನಕ ಅದನ್ನು ಇಟ್ಟುಕೊಂಡರು. ಅದು ನಾರಲಿಲ್ಲ, ಹುಳುವೂ ಬೀಳಲಿಲ್ಲ.</verse>
				<verse number="25">ಮೋಶೆ ಅವರಿಗೆ, “ಈ ದಿನ ಅದನ್ನು ಊಟಮಾಡಿ. ಇದು ಸರ್ವೇಶ್ವರನ ಸಬ್ಬತ್ ದಿನವಾದ್ದರಿಂದ ಈ ದಿನ ಅದು ಅಡವಿಯಲ್ಲಿ ದೊರೆಯುವುದಿಲ್ಲ.</verse>
				<verse number="26">ಆರು ದಿವಸ ಅದನ್ನು ಕೂಡಿಸಬಹುದು. ಏಳನಯ ದಿನ ಸಬ್ಬತ್ ಆದುದರಿಂದ ಅದು ದೊರೆಯುವುದೇ ಇಲ್ಲ,” ಎಂದು ಹೇಳಿದನು.</verse>
				<verse number="27">ಹಾಗೆಯೇ ಆಯಿತು. ಜನರಲ್ಲಿ ಕೆಲವರು ಏಳನೆಯ ದಿನದಲ್ಲಿ ಅದನ್ನು ಕೂಡಿಸಿಕೊಳ್ಳುವುದಕ್ಕೆ ಹೋದಾಗ ಅವರಿಗೆ ಏನೂ ಸಿಕ್ಕಲಿಲ್ಲ.</verse>
				<verse number="28">ಆಗ ಸರ್ವೇಶ್ವರ, “ಎಲ್ಲಿಯವರೆಗೆ ನೀವು ನನ್ನ ಆಜ್ಞೆಯನ್ನೂ ನಾನು ಮಾಡಿರುವ ನಿಯಮವನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರಿ?</verse>
				<verse number="29">ನೋಡಿ, ಸಬ್ಬತ್ ದಿನವನ್ನು ನೀವು ಆಚರಿಸಬೇಕೆಂದು ಸರ್ವೇಶ್ವರನಾದ ನಾನು ಅಪ್ಪಣೆ ಮಾಡಿರುವುದರಿಂದಲೇ ಆರನೆಯ ದಿನ ಎರಡು ದಿನದ ಆಹಾರ ನಿಮಗೆ ದೊರಕುವಂತೆ ಅನುಗ್ರಹಿಸಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವಲ್ಲಿಯೇ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಕೂಡದು,’ ಎಂದು ಮೋಶೆಗೆ ಹೇಳಿದರು.</verse>
				<verse number="30">ಆದುದರಿಂದ ಏಳನೆಯ ದಿನದಲ್ಲಿ ಜನರು ಕೆಲಸಮಾಡದೆ ವಿಶ್ರಮಿಸಿದರು.</verse>
				<verse number="31">ಇಸ್ರಯೇಲ್ ಮನೆತನದವರು ಆ ಆಹಾರಕ್ಕೆ ‘ಮನ್ನ’ ಎಂದು ಹೆಸರಿಟ್ಟರು. ಅದು ಬಿಳೀ ಕೊತ್ತಂಬರಿ ಕಾಳಿನಂತಿದ್ದು, ರುಚಿಯಲ್ಲಿ ಜೇನುತುಪ್ಪ ಹಾಕಿ ಕಲಸಿದ ದೋಸೆಗಳ ಹಾಗಿತ್ತು.</verse>
				<verse number="32">ಮೋಶೆ ಜನರಿಗೆ, “ಸರ್ವೇಶ್ವರ ಸ್ವಾಮಿ ಇದರ ವಿಷಯದಲ್ಲಿ ಕೊಟ್ಟ ಆಜ್ಞೆ ಇದು: ‘ನೀವು ಒಂದು ಹೋಮೆರ್ ತುಂಬ ಮನ್ನವನ್ನು ಇಟ್ಟುಕೊಳ್ಳಬೇಕು. ಏಕೆಂದರೆ ನಾನು ಈಜಿಪ್ಟಿನಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಈ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗೋಸ್ಕರ ಇದನ್ನು ಇಟ್ಟುಕೊಳ್ಳಬೇಕು,” ಎಂದು ಹೇಳಿದನು.</verse>
				<verse number="33">ಆದಕಾರಣ ಮೋಶೆ ಆರೋನನಿಗೆ, “ನೀನು ಒಂದು ಪಾತ್ರೆಯನ್ನು ತೆಗೆದುಕೊಂಡು ಅದರಲ್ಲಿ ಮೂರು ಸೇರಿನಷ್ಟು ಮನ್ನವನ್ನು ಹಾಕಿ ನಿಮ್ಮ ಸಂತತಿಯವರು ನೋಡುವುದಕ್ಕೋಸ್ಕರ ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿಡು,” ಎಂದು ಹೇಳಿದನು.</verse>
				<verse number="34">ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿ ಆಜ್ಞಾಶಾಸನ ಮಂಜೂಷದ ಮುಂದೆ ಅದನ್ನು ಇಟ್ಟನು.</verse>
				<verse number="35">ಇಸ್ರಯೇಲರು ಜನವಾಸವಿರುವ ಪ್ರದೇಶಕ್ಕೆ ಬರುವ ತನಕ ಅಂದರೆ ಕಾನಾನ್ ನಾಡಿನ ಮೇರೆಯನ್ನು ಸೇರುವ ತನಕ ನಾಲ್ವತ್ತು ವರ್ಷ ಮನ್ನವನ್ನೇ ಊಟ ಮಾಡುತ್ತಿದ್ದರು.</verse>
				<verse number="36">ಹೋಮೆರ್ ಎಂಬುದು ‘ಏಫಾ’ದಲ್ಲಿ ಹತ್ತನೆಯ ಒಂದು ಪಾಲು ಹಿಡಿಯುವಂಥದ್ದು.</verse>
			</chapter>
			<chapter number="17">
				<verse number="1">ಇಸ್ರಯೇಲರು ಸರ್ವೇಶ್ವರನ ಅಪ್ಪಣೆಯ ಪ್ರಕಾರ ಸೀನ್ ಎಂಬ ಮರುಭೂಮಿಯಿಂದ ಹೊರಟು ಮುಂದಕ್ಕೆ ಪ್ರಯಾಣ ಮಾಡಿ ರೆಫೀದೀಮಿನಲ್ಲಿ ಇಳಿದುಕೊಂಡರು.</verse>
				<verse number="2">ಅಲ್ಲಿ ಕುಡಿಯುವುದಕ್ಕೆ ನೀರಿರಲಿಲ್ಲ. ಜನರು ಮೋಶೆಯ ಸಂಗಡ ಜಗಳವಾಡುತ್ತಾ, “ನಮಗೆ ಕುಡಿಯುವುದಕ್ಕೆ ನೀರು ತೋರಿಸಬೇಕು,” ಎಂದು ಹೇಳಿದರು. ಆಗ ಮೋಶೆ, “ನೀವು ನನ್ನ ಸಂಗಡ ವಾದಿಸುವುದೇಕೆ? ಸರ್ವೇಶ್ವರನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.</verse>
				<verse number="3">ಅಲ್ಲಿ ಜನರು ನೀರಿಲ್ಲದೆ ಬಾಯಾರಿಕೆಯ ಬೇಸರದಿಂದ ಮೋಶೆಯ ವಿರುದ್ಧ ಗೊಣಗುಟ್ಟಿದರು. “ನೀನು ನಮ್ಮನ್ನು, ನಮ್ಮ ಮಕ್ಕಳನ್ನು ಹಾಗು ದನಕರುಗಳನ್ನು ಈಜಿಪ್ಟಿನಿಂದ ಕರೆದು ತಂದದ್ದು ಏಕೆ? ನೀರಿಲ್ಲದೆ ಸಾಯಿಸುವುದಕ್ಕೋ?” ಎಂದು ದೂರಿದರು.</verse>
				<verse number="4">ಆಗ ಮೋಶೆ ಸರ್ವೇಶ್ವರನಿಗೆ ಮೊರೆಯಿಟ್ಟನು, “ಈ ಜನರಿಗಾಗಿ ನಾನೇನು ಮಾಡಲಿ? ಅವರು ನನ್ನನ್ನು ಕಲ್ಲೆಸೆದು ಕೊಲ್ಲುವಂತಿದ್ದಾರೆ” ಎಂದು ಪ್ರಾರ್ಥಿಸಿದನು.</verse>
				<verse number="5">ಅದಕ್ಕೆ ಸರ್ವೇಶ್ವರ, “ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು, ಇಸ್ರಯೇಲರ ಹಿರಿಯರಲ್ಲಿ ಕೆಲವರನ್ನು ಕರೆದುಕೊಂಡು, ನಾನು ತೋರಿಸುವ ಸ್ಥಳಕ್ಕೆ ಜನರ ಮುಂದೆ ಹೋಗು.</verse>
				<verse number="6">ಅಲ್ಲೇ ಹೋರೇಬಿನಲ್ಲಿರುವ ಬಂಡೆಯೊಂದರ ಮೇಲೆ ನಾನೇ ನಿನ್ನ ಮುಂದೆ ನಿಲ್ಲುವೆನು. ಆ ಬಂಡೆಯನ್ನು ನೀನು ಹೊಡೆ. ಆಗ ಅದರಿಂದ ನೀರು ಹೊರಡುವುದು; ಜನರು ಕುಡಿಯಲಿ,” ಎಂದು ಅಪ್ಪಣೆಕೊಟ್ಟರು. ಹಾಗೆಯೇ ಮೋಶೆ ಇಸ್ರಯೇಲರ ಹಿರಿಯರ ಕಣ್ಣೆದುರಿನಲ್ಲೆ ಮಾಡಿದನು.</verse>
				<verse number="7">ಸರ್ವೇಶ್ವರ ಸ್ವಾಮಿ ತಮ್ಮ ಮಧ್ಯೆ ಇದ್ದಾರೋ ಇಲ್ಲವೋ ಎಂದು ಇಸ್ರಯೇಲರು ಅಲ್ಲಿ ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ‘ಮಸ್ಸಾ’ ಎಂತಲೂ ಜನರು ತನ್ನೊಡನೆ ವಾಗ್ವಾದ ಮಾಡಿದ್ದರಿಂದ ‘ಮೆರೀಬಾ’ ಎಂತಲೂ ಹೆಸರಿಟ್ಟನು.</verse>
				<verse number="8">ಅಮಾಲೇಕ್ಯರು ರೆಫೀದೀಮಿನಲ್ಲಿ ಇಸ್ರಯೇಲರ ಮೇಲೆ ಯುದ್ಧಮಾಡುವುದಕ್ಕೆ ಬಂದರು.</verse>
				<verse number="9">‘ಮೋಶೆ ಯೆಹೋಶುವನಿಗೆ, “ನೀನು ಯೋಧರನ್ನು ಆರಿಸಿಕೊಂಡು ನಾಳೆ ನಮ್ಮ ಪರವಾಗಿ ಹೊರಟು ಅಮಾಲೇಕ್ಯರೊಡನೆ ಯುದ್ಧಮಾಡು. ನಾನು ದೇವದಂಡವನ್ನು ಕೈಯಲ್ಲಿ ಹಿಡಿದುಕೊಂಡು ಗುಡ್ಡದ ತುದಿಯಲ್ಲಿ ನಿಂತುಕೊಳ್ಳುವೆನು,” ಎಂದು ಹೇಳಿದನು.</verse>
				<verse number="10">ಮೋಶೆಯ ಅಪ್ಪಣೆಯ ಮೇರೆಗೆ ಯೆಹೋಶುವನು ಅಮಾಲೇಕ್ಯರ ಸಂಗಡ ಯುದ್ಧಮಾಡಲು ಹೊರಟನು. ಮೋಶೆ, ಆರೋನ ಹಾಗು ಹೂರ ಈ ಮೂವರು ಗುಡ್ಡದ ತುದಿಗೆ ಏರಿದರು.</verse>
				<verse number="11">ಮೋಶೆ ತನ್ನ ಕೈಗಳನ್ನು ಮೇಲಕ್ಕೆ ಎತ್ತಿರುವಾಗಲೆಲ್ಲಾ ಇಸ್ರಯೇಲರು ಜಯಶೀಲರಾಗುತ್ತಿದ್ದರು, ಇಳಿಸುವಾಗಲೆಲ್ಲಾ ಅಮಾಲೇಕ್ಯರು ಜಯಶೀಲರಾಗುತ್ತಿದ್ದರು.</verse>
				<verse number="12">ಹೀಗಿರಲು ಮೋಶೆಯ ಕೈಗಳು ಆಯಾಸಗೊಳ್ಳುತ್ತಿದ್ದುದರಿಂದ ಆರೋನ ಮತ್ತು ಹೂರನು ಒಂದು ಕಲ್ಲನ್ನು ತಂದಿಟ್ಟು ಅದರ ಮೇಲೆ ಮೋಶೆಯನ್ನು ಕುಳ್ಳಿರಿಸಿದರು. ಅಲ್ಲದೆ ಬಲಗಡೆ ಒಬ್ಬನು ಎಡಗಡೆ ಒಬ್ಬನು ನಿಂತು ಅವನ ಕೈಗಳಿಗೆ ಆಧಾರಕೊಟ್ಟರು. ಈ ರೀತಿಯಾಗಿ ಅವನ ಕೈಗಳು ಹೊತ್ತು ಮುಳುಗುವ ತನಕ ಇಳಿಯದೆ ನಿಂತೇ ಇರುವಂತೆ ಮಾಡಿದರು.</verse>
				<verse number="13">ಹೀಗೆ ಯೆಹೋಶುವನು ಅಮಾಲೇಕ್ಯರ ಯೋಧರನ್ನು ಕತ್ತಿಗೆ ತುತ್ತಾಗಿಸಿ ಅವರನ್ನು ಸೋಲಿಸಿದನು.</verse>
				<verse number="14">ಆಗ ಸರ್ವೇಶ್ವರ, “ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಇಲ್ಲದಂತೆ ಮಾಡುವೆನು ಎಂಬ ಈ ಮಾತನ್ನು ಜ್ಞಾಪಕಾರ್ಥವಾಗಿ ಪುಸ್ತಕದಲ್ಲಿ ಬರೆ ಮತ್ತು ಯೆಹೋಶುವನಿಗೆ ಮನದಟ್ಟಾಗುವಂತೆ ಮಾಡು” ಎಂದು ಮೋಶೆಗೆ ಹೇಳಿದರು.</verse>
				<verse number="15">ಆ ಸ್ಥಳದಲ್ಲಿ ಮೋಶೆ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ, ‘ಯಾವ್ವೆನಿಸ್ಸಿ’ ಎಂದು ಹೆಸರಿಟ್ಟನು.</verse>
				<verse number="16">ಅಲ್ಲದೆ, “ಸರ್ವೇಶ್ವರನ ಪತಾಕೆಯನ್ನು ಎತ್ತಿಹಿಡಿಯಿರಿ. ಅಮಾಲೇಕ್ಯರ ಮೇಲೆ ಸರ್ವೇಶ್ವರನಿಗೆ ತಲತಲಾಂತರಕ್ಕೂ ಯುದ್ಧವಿರುವುದು,” ಎಂದು ಹೇಳಿದನು.</verse>
			</chapter>
			<chapter number="18">
				<verse number="1">ಇತ್ರೋ, ಮೋಶೆಯ ಮಾವ ಹಾಗೂ ಮಿದ್ಯಾನರ ಪೂಜಾರಿ. ದೇವರು ಮೋಶೆಗೂ ತಮ್ಮ ಜನರಾದ ಇಸ್ರಯೇಲರಿಗೂ ಮಾಡಿದ ಮಹಾತ್ಕಾರ್ಯಗಳನ್ನು ಕುರಿತು ಇವನು ಕೇಳಿದ್ದನು. ಸರ್ವೇಶ್ವರ ಸ್ವಾಮಿ ಹೇಗೆ ಇಸ್ರಯೇಲರನ್ನು ಈಜಿಪ್ಟಿನಿಂದ ಕರೆದುತಂದರೆಂಬ ವಿಷಯ ಇವನಿಗೆ ಮುಟ್ಟಿತ್ತು.</verse>
				<verse number="2">ಇವನು ತನ್ನ ಬಳಿಗೆ ಕಳಿಸಲಾಗಿದ್ದ ಮೋಶೆಯ ಹೆಂಡತಿ ಚಿಪ್ಪೋರಳನ್ನು ಮತ್ತು ಆಕೆಯ ಇಬ್ಬರು ಗಂಡು ಮಕ್ಕಳನ್ನು ಕರೆದುಕೊಂಡು ಬಂದನು.</verse>
				<verse number="3">ಮೋಶೆ ತಾನು ಅನ್ಯದೇಶದ ಪ್ರವಾಸಿ ಎಂದು ಹೇಳಿ ತನ್ನ ಹಿರಿಯ ಮಗನಿಗೆ ‘ಗೇರ್ಷೋಮ್’ ಎಂದು ಹೆಸರಿಟ್ಟಿದ್ದನು.</verse>
				<verse number="4">ತನ್ನ ತಂದೆಯ ದೇವರು ನನಗೆ ಸಹಾಯಕರಾಗಿದ್ದು ನನ್ನನ್ನು ಫರೋಹನ ಕತ್ತಿಯಿಂದ ಕಾಪಾಡಿದರು ಎಂದು ಕಿರಿಯ ಮಗನಿಗೆ ‘ಎಲಿಯೇಜರ್’ ಎಂದು ಹೆಸರಿಟ್ಟಿದ್ದನು.</verse>
				<verse number="5">ಮೋಶೆಯ ಮಾವ ಇತ್ರೋ, ಮೋಶೆಯ ಮಕ್ಕಳನ್ನೂ ಹೆಂಡತಿಯನ್ನೂ ಕರೆದುಕೊಂಡು ಮರುಭೂಮಿಯಲ್ಲಿ ದೇವರ ಬೆಟ್ಟದ ಹತ್ತಿರ ಇಳಿದುಕೊಂಡಿದ್ದ ಮೋಶೆಯ ಬಳಿಗೆ ಬಂದನು.</verse>
				<verse number="6">“ನಿನ್ನ ಮಾವನಾದ ನಾನು, ನಿನ್ನ ಹೆಂಡತಿ ಹಾಗು ನಿನ್ನ ಇಬ್ಬರು ಮಕ್ಕಳು ಬಂದಿದ್ದೇವೆ” ಎಂದು ಮೋಶೆಗೆ ಹೇಳಿ ಕಳಿಸಿದನು.</verse>
				<verse number="7">ಮೋಶೆ ಹೊರಗೆ ಬಂದು ತನ್ನ ಮಾವನನ್ನು ಎದುರುಗೊಂಡು, ವಂದಿಸಿ, ಮುದ್ದಿಟ್ಟನು. ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಅವರು ಡೇರೆಯೊಳಕ್ಕೆ ಹೋದರು.</verse>
				<verse number="8">ಸರ್ವೇಶ್ವರ ಸ್ವಾಮಿ ಇಸ್ರಯೇಲರ ಪರವಾಗಿ ಫರೋಹನಿಗೂ ಈಜಿಪ್ಟಿನವರಿಗೂ ಮಾಡಿದ್ದೆಲ್ಲವನ್ನೂ ಮತ್ತು ದಾರಿಯಲ್ಲಿ ತಮಗುಂಟಾದ ಎಲ್ಲ ಕಷ್ಟದುಃಖಗಳನ್ನು ಹಾಗು ಸರ್ವೇಶ್ವರ ಹೇಗೆ ಅವುಗಳಿಂದ ಕಾಪಾಡಿದರೆಂಬುದನ್ನು ಮೋಶೆ ತನ್ನ ಮಾವನಿಗೆ ವಿವರಿಸಿದನು.</verse>
				<verse number="9">ಈಜಿಪ್ಟಿನವರ ಕೈಯಿಂದ ಇಸ್ರಯೇಲರನ್ನು ಬಿಡಿಸಿ ಸರ್ವೇಶ್ವರ ಅವರಿಗೆ ಇಷ್ಟೆಲ್ಲಾ ಉಪಕಾರ ಮಾಡಿದ್ದಕ್ಕಾಗಿ ಇತ್ರೋ ಸಂತೋಷಪಟ್ಟನು.</verse>
				<verse number="10">“ಈಜಿಪ್ಟಿನವರ ಕೈಯಿಂದಲೂ ಫರೋಹನ ಕೈಯಿಂದಲೂ ನಿಮ್ಮನ್ನು ಬಿಡುಗಡೆಮಾಡಿದ ಸರ್ವೇಶ್ವರ ಸ್ವಾಮಿಗೆ ಸ್ತೋತ್ರವಾಗಲಿ.</verse>
				<verse number="11">ಆತ ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಈಜಿಪ್ಟಿನವರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲೇ ಅವರನ್ನು ತಗ್ಗಿಸಿದ್ದಾನೆ. ಆದ್ದರಿಂದ ಸರ್ವೇಶ್ವರ ಸ್ವಾಮಿಯೇ ಎಲ್ಲ ದೇವರುಗಳಿಗಿಂತ ದೊಡ್ಡವರೆಂದು ಈಗ ತಿಳಿದುಕೊಂಡಿದ್ದೇನೆ,” ಎಂದು ಹೇಳಿದನು.</verse>
				<verse number="12">ಅದೂ ಅಲ್ಲದೆ ಮೋಶೆಯ ಮಾವ ಇತ್ರೋ ದೇವರಿಗೆ ದಹನ ಬಲಿಯನ್ನು ಹಾಗು ಇತರ ಬಲಿಗಳನ್ನು ಸಮರ್ಪಿಸಿದನು. ಆರೋನನು ಹಾಗು ಇಸ್ರಯೇಲರ ಹಿರಿಯರೆಲ್ಲರು ಬಂದು ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನ ಮಾಡಿದರು.</verse>
				<verse number="13">ಮಾರನೆಯ ದಿನ ಮೋಶೆ ಜನರಿಗೆ ನ್ಯಾಯ ತೀರಿಸಲು ಕುಳಿತಿದ್ದನು. ಬೆಳಿಗ್ಗೆಯಿಂದ ಸಂಜೆಯವರೆಗೂ ಜನರು ಅವನ ಸುತ್ತಲು ನಿಂತಿದ್ದರು.</verse>
				<verse number="14">ಮೋಶೆ ಜನರಿಗಾಗಿ ಮಾಡುತ್ತಿದ್ದುದ್ದೆಲ್ಲವನ್ನು ಅವನ ಮಾವ ನೋಡಿ, “ಜನರಿಗೋಸ್ಕರ ಇಷ್ಟು ಪ್ರಯಾಸಪಡುತ್ತಿರುವೆ ಏಕೆ? ಬೆಳಿಗ್ಗೆಯಿಂದ ಸಂಜೆಯವರೆಗೂ ಜನರು ನಿನ್ನ ಸುತ್ತಲೂ ನಿಂತುಕೊಂಡಿದ್ದಾರೆ; ನೀನೊಬ್ಬನೇ ನ್ಯಾಯ ತೀರಿಸಲು ಕುಳಿತುಕೊಳ್ಳಬೇಕೆ?” ಎಂದು ಕೇಳಿದನು.</verse>
				<verse number="15">ಅದಕ್ಕೆ ಮೋಶೆ, “ದೇವರ ತೀರ್ಪನ್ನು ತಿಳಿದುಕೊಳ್ಳುವುದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ;</verse>
				<verse number="16">ಅವರಲ್ಲಿ ವ್ಯಾಜ್ಯವೇನಾದರು ಉಂಟಾದರೆ ನನ್ನ ಬಳಿಗೆ ಬರುತ್ತಾರೆ. ನಾನು ವಿಚಾರಣೆ ಮಾಡಿ, ಅವರಿಗೆ ನ್ಯಾಯ ತೀರಿಸಿ, ದೇವರ ಆಜ್ಞಾವಿಧಿಗಳನ್ನು ಬೋಧಿಸುತ್ತೇನೆ,” ಎಂದು ಉತ್ತರಿಸಿದನು.</verse>
				<verse number="17">ಇದನ್ನು ಕೇಳಿದ ಇತ್ರೋನನು ಮೋಶೆಗೆ: “ನೀನು ಮಾಡುತ್ತಿರುವುದು ಸರಿಯಲ್ಲ.</verse>
				<verse number="18">ಈ ಕೆಲಸ ಬಹು ಕಷ್ಟಕರವಾದುದು; ನಿನ್ನೊಬ್ಬನಿಂದಲೇ ಅದನ್ನು ನಡೆಸಲಾಗದು. ನೀನೂ ನಿನ್ನ ಈ ಜನರೂ ಖಂಡಿತವಾಗಿ ಬಳಲಿಹೋಗುವಿರಿ.</verse>
				<verse number="19">ಆದ್ದರಿಂದ ನನ್ನ ಮಾತನ್ನು ಕೇಳು; ನಾನು ಕೊಡುವ ಸಲಹೆಯನ್ನು ಗಮನಿಸು, ದೇವರು ನಿನ್ನೊಡನೆ ಇರುವರು. ನೀನು ಜನರಿಗೂ ದೇವರಿಗೂ ಮಧ್ಯಸ್ಥನಾಗಿದ್ದು ಜನರ ವ್ಯಾಜ್ಯಗಳನ್ನು ದೇವರ ಮುಂದೆ ತರುವುದೇನೋ ಸರಿ.</verse>
				<verse number="20">ಅಂತೆಯೇ ದೇವರ ಆಜ್ಞಾವಿಧಿಗಳನ್ನು ಜನರಿಗೆ ಬೋಧಿಸಿ ಅವರು ನಡೆಯಬೇಕಾದ ಮಾರ್ಗವನ್ನು ಹಾಗು ಕೈಗೊಳ್ಳಬೇಕಾದ ಕಾರ್ಯಗಳನ್ನು ತಿಳಿಯಪಡಿಸಲೇಬೇಕು.</verse>
				<verse number="21">ಆದರೆ ನೀನು ಈ ಜನರಲ್ಲೆಲ್ಲಾ ಸಮರ್ಥರು, ದೇವಭಕ್ತರು, ನಂಬಿಗಸ್ಥರು ಹಾಗು ಲಂಚ ಮುಟ್ಟದವರು ಆಗಿರುವ ವ್ಯಕ್ತಿಗಳನ್ನು ಆರಿಸಿಕೊ. ಅಂಥವರನ್ನು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಅಧಿಪತಿಗಳನ್ನಾಗಿ ನೇಮಿಸು.</verse>
				<verse number="22">ಅವರೇ ಸದಾ ಜನರಿಗೆ ನ್ಯಾಯ ತೀರಿಸಲಿ; ದೊಡ್ಡ ವ್ಯಾಜ್ಯಗಳನ್ನು ನಿನ್ನ ಮುಂದೆ ತರಲಿ. ಆಗ ಅವರೂ ಈ ಹೊಣೆಯನ್ನು ಹೊರುವುದರಿಂದ ನಿನ್ನ ಹೊರೆ ಹಗುರವಾಗುವುದು.</verse>
				<verse number="23">ಹೀಗೆ ಮಾಡಲು ದೇವರು ನಿನಗೆ ಅಪ್ಪಣೆ ಕೊಡಲಿ; ಮಾಡಿದರೆ ಈ ಹೊಣೆಯನ್ನು ನಿರ್ವಹಿಸಲು ಶಕ್ತನಾಗುವೆ; ಈ ಜನರೂ ಕೂಡ ಸಂತುಷ್ಟರಾಗಿ ತಮ್ಮ ತಮ್ಮ ಮನೆಗಳಿಗೆ ಹಿಂದಿರುಗುವರು,” ಎಂದನು.</verse>
				<verse number="24">ಮೋಶೆ ತನ್ನ ಮಾವನ ಸಲಹೆಯನ್ನು ಒಪ್ಪಿಕೊಂಡನು. ಅವನು ಹೇಳಿದಂತೆಯೇ ಮಾಡಿದನು.</verse>
				<verse number="25">ಇಸ್ರಯೇಲರಲ್ಲಿ ಸಮರ್ಥರಾದವರನ್ನು ಆರಿಸಿಕೊಂಡು ಸಾವಿರ, ನೂರು, ಐವತ್ತು ಹಾಗು ಹತ್ತು ಮಂದಿಗಳ ಮೇಲೆ ಅಧಿಪತಿಗಳನ್ನು ನೇಮಿಸಿದನು.</verse>
				<verse number="26">ಇವರು ಸದಾ ಜನರಿಗೆ ನ್ಯಾಯತೀರಿಸುವವರಾದರು. ಜಟಿಲವಾದ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಿದ್ದರು. ಸುಲಭವಾದುವುಗಳನ್ನು ಅವರೇ ತೀರಿಸುತ್ತಾ ಬಂದರು.</verse>
				<verse number="27">ಬಳಿಕ ಮೋಶೆ ತನ್ನ ಮಾವನನ್ನು ಬೀಳ್ಕೊಟ್ಟನು. ಅವನು ತನ್ನ ನಾಡಿಗೆ ಹಿಂತಿರುಗಿ ಹೋದನು.</verse>
			</chapter>
			<chapter number="19">
				<verse number="1">ಇಸ್ರಯೇಲರು ಈಜಿಪ್ಟ್ ದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿವಸದಲ್ಲಿ ಸೀನಾಯಿ ಮರುಭೂಮಿಗೆ ಬಂದರು.</verse>
				<verse number="2">ಅವರು ರೆಫೀದೀಮನ್ನು ಬಿಟ್ಟು ಆ ಮರುಭೂಮಿಗೆ ಬಂದು ಅಲ್ಲಿನ ಬೆಟ್ಟಕ್ಕೆ ಎದುರಾಗಿ ಇಳಿದುಕೊಂಡರು.</verse>
				<verse number="3">ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಬಂದನು. ಸರ್ವೇಶ್ವರ ಸ್ವಾಮಿ ಬೆಟ್ಟದ ಮೇಲಿಂದ ಕೂಗಿ ಅವನಿಗೆ, “ನೀನು ಯಕೋಬನ ಮನೆತನದವರಾದ ಇಸ್ರಯೇಲರಿಗೆ ಈ ಮಾತುಗಳನ್ನು ಹೇಳು:</verse>
				<verse number="4">'ನಾನು ಈಜಿಪ್ಟಿನವರಿಗೆ ಏನು ಮಾಡಿದೆನೆಂದು ನೀವು ನೋಡಿದ್ದೀರಿ. ಹದ್ದು ತನ್ನ ಮರಿಗಳನ್ನು ರೆಕ್ಕೆಗಳ ಮೇಲೆ ಹೊತ್ತುಕೊಳ್ಳುವಂತೆ ನಾನು ನಿಮ್ಮನ್ನು ಹೊತ್ತು ಈ ನನ್ನ ಸ್ಥಳಕ್ಕೆ ಸೇರಿಸಿದ್ದೇನೆ. ಇದೆಲ್ಲಾ ನಿಮಗೆ ಗೊತ್ತಿದೆ.</verse>
				<verse number="5">ಹೀಗಿರಲು, ನೀವು ನನ್ನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ನೀಡುವ ನಿಬಂಧನೆಯನ್ನು ಅನುಸರಿಸಿ ನಡೆದರೆ, ಸಮಸ್ತ ಭೂಮಿ ನನ್ನದಾಗಿದ್ದರೂ ನೀವು ಎಲ್ಲ ಜನಾಂಗಗಳಲ್ಲಿ ನನಗೆ ಸ್ವಕೀಯ ಜನರಾಗುವಿರಿ.</verse>
				<verse number="6">ಅಲ್ಲದೆ ನೀವು ನನಗೆ ಯಾಜಕ ರಾಜವಂಶ ಹಾಗು ಪರಿಶುದ್ಧ ಜನಾಂಗ ಆಗುವಿರಿ,’ ಇಸ್ರಯೇಲರಿಗೆ ನೀನು ತಿಳಿಸಬೇಕಾದ ವಿಷಯವಿದು,” ಎಂದರು.</verse>
				<verse number="7">ಮೋಶೆ ಇಳಿದುಬಂದು ಜನರ ಹಿರಿಯರನ್ನು ಕೂಡಿಸಿ, ಸರ್ವೇಶ್ವರ ಆಜ್ಞಾಪಿಸಿದ್ದ ಆ ಮಾತುಗಳನ್ನೆಲ್ಲಾ ಅವರಿಗೆ ತಿಳಿಸಿದನು.</verse>
				<verse number="8">ಜನರೆಲ್ಲರು, “ಸರ್ವೇಶ್ವರ ಸ್ವಾಮಿ ಹೇಳಿದಂತೆಯೇ ನಾವು ಮಾಡುತ್ತೇವೆ,” ಎಂದು ಒಕ್ಕೊರಲಿನಿಂದ ಉತ್ತರಕೊಟ್ಟರು. ಮೋಶೆ ಸರ್ವೇಶ್ವರನ ಬಳಿಗೆ ಹೋಗಿ ಜನರ ಆ ಉತ್ತರವನ್ನು ಅರಿಕೆ ಮಾಡಿದನು.</verse>
				<verse number="9">ಸರ್ವೇಶ್ವರ ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತಾಡುವುದನ್ನು ಜನರು ಕೇಳುವಂತೆಯೂ ಎಂದಿಗೂ ನಿನ್ನನ್ನು ನಂಬುವಂತೆಯೂ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುತ್ತೇನೆ,” ಎಂದು ಹೇಳಿದರು.</verse>
				<verse number="10">ಮೋಶೆ ಜನರ ಮಾತುಗಳನ್ನು ಸರ್ವೇಶ್ವರನಿಗೆ ಅರಿಕೆಮಾಡಲು ಸರ್ವೇಶ್ವರ ಹೀಗೆಂದರು: “ನೀನು ಜನರ ಬಳಿಗೆ ಹೋಗಿ ಇಂದು ಮತ್ತು ನಾಳೆ ಅವರನ್ನು ಪರಿಶುದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಳ್ಳಲಿ.</verse>
				<verse number="11">ಮೂರನೆಯ ದಿನ ಸಿದ್ಧರಾಗಿರಲಿ. ಏಕೆಂದರೆ ಆ ಮೂರನೆಯ ದಿನ ಸರ್ವೇಶ್ವರನಾದ ನಾನು ಸಮಸ್ತ ಜನರಿಗೂ ಪ್ರತ್ಯಕ್ಷನಾಗಲು ಸೀನಾಯಿ ಬೆಟ್ಟದ ಮೇಲೆ ಇಳಿದು ಬರುವೆನು.</verse>
				<verse number="12">ಜನರು ಹತ್ತಿರಕ್ಕೆ ಬಾರದಂತೆ ನೀನು ಬೆಟ್ಟದ ಸುತ್ತಲೂ ಒಂದು ಮೇರೆಯನ್ನು ಏರ್ಪಡಿಸು. ಮತ್ತು ಜನರಿಗೆ ‘ಎಚ್ಚರಿಕೆ, ನೀವು ಈ ಬೆಟ್ಟವನ್ನು ಏರಕೂಡದು; ಅದರ ಅಂಚನ್ನೂ ಮುಟ್ಟಕೂಡದು. ಮುಟ್ಟಿದವನಿಗೆ ಮರಣ ಶಿಕ್ಷೆಯಾಗುವುದು ನಿಶ್ಚಯ.</verse>
				<verse number="13">ಅಂಥವನನ್ನು ಯಾರೂ ಕೈಯಿಂದ ಮುಟ್ಟದೆ ಕಲ್ಲೆಸೆದು ಅಥವಾ ಬಾಣಬಿಟ್ಟು ಕೊಲ್ಲಬೇಕು. ಬೆಟ್ಟವನ್ನು ಮುಟ್ಟಿದವರು ಮನುಷ್ಯನಾಗಿರಲಿ, ಪಶುಪ್ರಾಣಿಯಾಗಲಿ ಉಳಿಯಬಾರದು.’ ಕೊಂಬಿನ ಧ್ವನಿ ಕೇಳಿಸಿದಾಗ ಬೆಟ್ಟವನ್ನೇರಿ ಬರಬೇಕೆಂದು ಹೇಳು.”</verse>
				<verse number="14">ಅಂತೆಯೇ ಮೋಶೆ ಬೆಟ್ಟದಿಂದ ಇಳಿದು ಬಂದು ಜನರನ್ನು ಪರಿಶುದ್ಧಗೊಳಿಸಿದನು. ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಂಡರು.</verse>
				<verse number="15">ಆಗ ಮೋಶೆ ಜನರಿಗೆ, “ಮೂರನೆಯ ದಿನಕ್ಕಾಗಿ ಸಿದ್ಧರಾಗಿರಿ; ಯಾವ ಪುರುಷನು ಸ್ತ್ರೀಸಂಗ ಮಾಡಬಾರದು,” ಎಂದು ಹೇಳಿದನು.</verse>
				<verse number="16">ಮೂರನೆಯ ದಿನ ಸೂರ್ಯೋದಯ ಆಗುವಾಗ ಆ ಬೆಟ್ಟದ ಮೇಲೆ ಗುಡುಗು, ಮಿಂಚು, ಕಾರ್ಮುಗಿಲು ಹಾಗು ತುತೂರಿಯ ಮಹಾಧ್ವನಿ ಉಂಟಾಯಿತು. ಪಾಳೆಯದಲ್ಲಿದ್ದ ಜನರೆಲ್ಲರು ನಡುಗಿದರು.</verse>
				<verse number="17">ದೇವದರ್ಶನಕ್ಕಾಗಿ ಮೋಶೆ ಜನರನ್ನು ಪಾಳೆಯದ ಹೊರಕ್ಕೆ ಬರಮಾಡಿದನು. ಅವರು ಬಂದು ಬೆಟ್ಟದ ಬುಡದಲ್ಲಿ ನಿಂತರು.</verse>
				<verse number="18">ಸೀನಾಯಿ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತ್ತು. ಏಕೆಂದರೆ ಸರ್ವೇಶ್ವರ ಸ್ವಾಮಿ ಬೆಂಕಿಯ ರೂಪದಲ್ಲಿ ಆ ಬೆಟ್ಟದ ಮೇಲೆ ಇಳಿದುಬಂದಿದ್ದರು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದೂ ಅಲ್ಲದೆ ಬೆಟ್ಟವೆಲ್ಲ ಬಹಳವಾಗಿ ಕಂಪಿಸಿತು.</verse>
				<verse number="19">ತುತೂರಿಯ ಧ್ವನಿ ಹೆಚ್ಚು ಹೆಚ್ಚಾಗುತ್ತಾ ಬಂದಿತು. ಮೋಶೆ ಮಾತಾಡಿದಾಗ ದೇವರು ಮೇಘಗರ್ಜನೆಯಿಂದ ಉತ್ತರಕೊಟ್ಟರು.</verse>
				<verse number="20">ಸರ್ವೇಶ್ವರ ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದರು. ಅವರು, “ಬೆಟ್ಟದ ತುದಿಗೆ ಬಾ,” ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.</verse>
				<verse number="21">ಆಗ ಸರ್ವೇಶ್ವರ ಮೋಶೆಗೆ, “ನೀನಿಳಿದು ಹೋಗಿ ಜನರನ್ನು ಎಚ್ಚರಿಸಬೇಕು. ಅವರು ನೋಡಬೇಕೆಂಬ ಆಶೆಯಿಂದ ಸರ್ವೇಶ್ವರನಾದ ನನ್ನ ಹತ್ತಿರಕ್ಕೆ ಮೇರೆಯನ್ನು ದಾಟಿ ಬಂದಾರು; ಹಾಗೆ ಬಂದರೆ ಬಹುಜನ ನಾಶವಾಗುವರು.</verse>
				<verse number="22">ನನ್ನ ಸನ್ನಿಧಿಗೆ ಬರುವ ಯಾಜಕರು ಕೂಡ ತಮ್ಮನ್ನೇ ಶುದ್ಧಪಡಿಸಿಕೊಳ್ಳಬೇಕು. ಇಲ್ಲವಾದರೆ ಅವರನ್ನೂ ನಾನು ತಟ್ಟನೆ ನಾಶಮಾಡುವೆನು,” ಎಂದು ಹೇಳಿದರು.</verse>
				<verse number="23">ಅದಕ್ಕೆ ಮೋಶೆ, “ಸೀನಾಯಿ ಬೆಟ್ಟವನ್ನೇರುವುದಕ್ಕೆ ಜನರಿಂದಾಗದು. ನೀವು ಆಜ್ಞಾಪಿಸಿದಂತೆ ನಿಮಗಾಗಿ ಪ್ರತ್ಯೇಕಿಸಿಡಲು ಬೆಟ್ಟದ ಸುತ್ತಲೂ ಮೇರೆಯನ್ನು ಹಾಕಿಸಿದ್ದೇನೆ,” ಎಂದನು.</verse>
				<verse number="24">ಸರ್ವೇಶ್ವರ ಅವನಿಗೆ, “ನೀನು ಇಳಿದು ಹೋಗಿ ಆರೋನನನ್ನು ಕರೆದುಕೊಂಡು ಮೇಲಕ್ಕೆ ಬಾ; ಆದರೆ ಯಾಜಕರು ಹಾಗು ಜನರು ಆ ಮೇರೆಯನ್ನು ದಾಟಿ ನನ್ನ ಹತ್ತಿರ ಬರಕೂಡದು; ದಾಟಿ ಬಂದರೆ ಅವರನ್ನು ತಟ್ಟನೆ ನಾಶಮಾಡಬಹುದು ಎಂದು ಹೇಳು,” ಎಂದರು.</verse>
				<verse number="25">ಮೋಶೆ ಇಳಿದು ಹೋಗಿ ಹಾಗೆಯೇ ಜನರಿಗೆ ತಿಳಿಸಿದನು.</verse>
			</chapter>
			<chapter number="20">
				<verse number="1">ದೇವರು ಕೊಟ್ಟ ಆಜ್ಞೆಗಳು ಇವು:</verse>
				<verse number="2">“ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದಲ್ಲಿದ್ದ ನಿನ್ನನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದವನು.</verse>
				<verse number="3">ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಕೂಡದು.</verse>
				<verse number="4">ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಿನ ನೀರಿನಲ್ಲಾಗಲಿ, ಇರುವ ಯಾವುದರ ರೂಪವನ್ನು ಅಥವಾ ವಿಗ್ರಹವನ್ನು ಮಾಡಿಕೊಳ್ಳಬೇಡ.</verse>
				<verse number="5">ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.</verse>
				<verse number="6">ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುತ್ತೇನೆ.</verse>
				<verse number="7">ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಪಡಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗ ಪಡಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.</verse>
				<verse number="8">ಸಬ್ಬತ್ ದಿನವನ್ನು ದೇವರ ದಿನವೆಂದು ತಿಳಿದು ಪವಿತ್ರವಾಗಿ ಆಚರಿಸು.</verse>
				<verse number="9">ಆರು ದಿನಗಳು ದುಡಿದು ನಿನ್ನ ಕೆಲಸವನ್ನೆಲ್ಲ ಮಾಡು.</verse>
				<verse number="10">ಏಳನೆಯ ದಿನ ನಿನ್ನ ದೇವರಾದ ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನ. ಅಂದು ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡು ಹೆಣ್ಣು ಮಕ್ಕಳು, ನಿನ್ನ ಗಂಡು ಹೆಣ್ಣು ಆಳುಗಳು, ಪಶುಪ್ರಾಣಿಗಳು ಹಾಗು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು.</verse>
				<verse number="11">ಸರ್ವೇಶ್ವರನಾದ ನಾನು ಆರು ದಿನಗಳಲ್ಲಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಮಾಡಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡೆನು. ಆದುದರಿಂದ ಅದನ್ನು ಸರ್ವೇಶ್ವರನ ವಿಶ್ರಾಂತಿ ದಿನವನ್ನಾಗಿ ಆಶೀರ್ವದಿಸಿ ಪವಿತ್ರಗೊಳಿಸಿದೆನು.</verse>
				<verse number="12">ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಬಾಳುವೆ.</verse>
				<verse number="13">ಕೊಲೆಮಾಡಬೇಡ.</verse>
				<verse number="14">ವ್ಯಭಿಚಾರಮಾಡಬೇಡ.</verse>
				<verse number="15">ಕದಿಯಬೇಡ.</verse>
				<verse number="16">ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳಬೇಡ.</verse>
				<verse number="17">ನೆರೆಯವನ ಮನೆಯನ್ನು ಬಯಸಬೇಡ; ಅವನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬೇಡ.</verse>
				<verse number="18">ಆ ಗುಡುಗು ಮಿಂಚನ್ನು, ತುತೂರಿ ಧ್ವನಿಯನ್ನು ಹಾಗು ಬೆಟ್ಟದಿಂದ ಹೊರಡುತ್ತಿದ್ದ ಹೊಗೆಯನ್ನು ಜನರೆಲ್ಲರು ನೋಡಿದರು. ನೋಡಿ ನಡುಗುತ್ತಾ ದೂರದಲ್ಲೇ ನಿಂತುಕೊಂಡರು.</verse>
				<verse number="19">ಅವರು ಮೋಶೆಗೆ, “ನೀನೇ ನಮ್ಮೊಡನೆ ಮಾತಾಡು, ನಾವು ಕೇಳುತ್ತೇವೆ. ದೇವರು ನಮ್ಮೊಡನೆ ಮಾತಾಡಿದರೆ ನಾವು ಸತ್ತು ಹೋಗುತ್ತೇವೆ,” ಎಂದು ಹೇಳಿದರು.</verse>
				<verse number="20">ಅದಕ್ಕೆ ಮೋಶೆ, “ಭಯಪಡಬೇಡಿ; ದೇವರು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ ಬಂದಿದ್ದಾರೆ; ಹೀಗೆ ದೈವಭೀತಿ ನಿಮ್ಮ ಕಣ್ಮುಂದಿದ್ದು ನೀವು ಪಾಪಮಾಡದೆ ಇರುವಿರಿ,” ಎಂದನು.</verse>
				<verse number="21">ಮೋಶೆಯೊಬ್ಬನೇ ದೇವರಿದ್ದ ಕಾರ್ಮುಗಿಲನ್ನು ಸಮೀಪಿಸಿದ್ದನು. ಜನರು ದೂರದಲ್ಲೇ ನಿಂತಿದ್ದರು.</verse>
				<verse number="22">ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆ ಹೇಳಿದರು: “ಇಸ್ರಯೇಲರಿಗೆ ಹೀಗೆಂದು ತಿಳಿಸು - ‘ನಾನು ಆಕಾಶದಿಂದ ನಿಮ್ಮೊಡನೆ ಮಾತಾಡಿದ್ದೇನೆಂದು ನಿಮಗೆ ಗೊತ್ತಿದೆ.</verse>
				<verse number="23">ಆದ್ದರಿಂದ ನೀವು ನನಗೆ ಪ್ರತಿಯಾಗಿ ಬೆಳ್ಳಿಬಂಗಾರಗಳಿಂದ ದೇವರುಗಳನ್ನು ಮಾಡಿಕೊಳ್ಳಬಾರದು,</verse>
				<verse number="24">ನನಗಾಗಿ ನೀವು ಮಣ್ಣಿನಿಂದ ಒಂದು ಬಲಿಪೀಠವನ್ನು ಮಾಡಬೇಕು. ಅದರ ಮೇಲೆ ನಿಮ್ಮ ದನಕುರಿಗಳನ್ನು ದಹನ ಬಲಿಯನ್ನಾಗಿಯೂ ಸಮಾಧಾನ ಬಲಿಯನ್ನಾಗಿಯೂ ಸಮರ್ಪಿಸಬೇಕು.</verse>
				<verse number="25">ನನ್ನ ಹೆಸರನ್ನು ನಿಮ್ಮ ನೆನಪಿಗೆ ಬರಮಾಡುವ ಎಲ್ಲ ಸ್ಥಳಗಳಲ್ಲಿಯೂ ನಾನು ನಿಮ್ಮ ಬಳಿಗೆ ಬಂದು ನಿಮ್ಮನ್ನು ಆಶೀರ್ವದಿಸುವೆನು.</verse>
				<verse number="26">ನೀವು ನನಗಾಗಿ ಕಲ್ಲಿನಿಂದ ಬಲಿಪೀಠವನ್ನು ಕಟ್ಟಬೇಕಾದರೆ ಕೆತ್ತಿರುವ ಕಲ್ಲುಗಳಿಂದ ಕಟ್ಟಕೂಡದು. ಏಕೆಂದರೆ ಉಳಿ ಮುಂತಾದುದನ್ನು ಉಪಯೋಗಿಸಿದರೆ ಅದು ಅಪವಿತ್ರವಾಗುವುದು.</verse>
				<verse number="27">ಅದೂ ಅಲ್ಲದೆ ನಿಮ್ಮ ನಗ್ನತೆ ನನ್ನ ಪೀಠದ ಮೇಲೆ ಕಾಣಿಸಿಕೊಳ್ಳದಂತೆ ಮೆಟ್ಟಲುಗಳ ಮೂಲಕ ಅದರ ಮೇಲೆ ಹತ್ತಬೇಡಿ.</verse>
			</chapter>
			<chapter number="21">
				<verse number="1">“ಇಸ್ರಯೇಲರಿಗೆ ಈ ಕಟ್ಟಳೆಗಳನ್ನು ಕೊಡು:</verse>
				<verse number="2">ನಿಮ್ಮಲ್ಲಿ ಯಾವನಾದರು ಒಬ್ಬ ಇಬ್ರಿಯನನ್ನು ಗುಲಾಮನನ್ನಾಗಿ ಕೊಂಡುಕೊಂಡರೆ ಆ ಇಬ್ರಿಯನು ಆರು ವರ್ಷ ಗುಲಾಮನಾಗಿ ದುಡಿದು ಏಳನೆಯ ವರ್ಷ ‘ಏನೂ ಕೊಡದೆ ಬಿಡುಗಡೆಯಾಗಿ ಹೋಗಬೇಕು.</verse>
				<verse number="3">ಅವನು ಮದುವೆಯಿಲ್ಲದವನಾಗಿ ಬಂದಿದ್ದರೆ ಒಂಟಿಗನಾಗಿಯೇ ಹೋಗಲಿ. ಹೆಂಡತಿಯುಳ್ಳವನಾಗಿ ಬಂದಿದ್ದರೆ ಹೆಂಡತಿಯೂ ಅವನ ಜೊತೆಯಲ್ಲಿ ಹೋಗಲಿ.</verse>
				<verse number="4">ಅವನ ಯಜಮಾನ ಅವನಿಗೆ ಮದುವೆ ಮಾಡಿಸಿ ಆ ಹೆಂಡತಿಗೆ ಗಂಡು ಇಲ್ಲವೆ ಹೆಣ್ಣು ಮಕ್ಕಳಾಗಿದ್ದರೆ ಆ ಹೆಂಡತಿ ಹಾಗು ಅವಳ ಮಕ್ಕಳು ಯಜಮಾನನ ಸೊತ್ತಾಗುವರು. ಆ ಗುಲಾಮನು ಒಂಟಿಯಾಗಿಯೇ ಹೊರಟು ಹೋಗಲಿ.</verse>
				<verse number="5">ಆದರೆ ಆ ಗುಲಾಮನು ತಾನು ತನ್ನ ಯಜಮಾನನನ್ನೂ ತನ್ನ ಮಡದಿ ಮಕ್ಕಳನ್ನೂ ಪ್ರೀತಿಸುತ್ತೇನೆ, ಈ ಕಾರಣ ಬಿಡುಗಡೆ ಹೊಂದಿ ಹೋಗಲು ಇಷ್ಟವಿಲ್ಲವೆಂದು ದೃಢವಾಗಿ ಹೇಳಬಹುದು.</verse>
				<verse number="6">ಆಗ ಅವನ ಯಜಮಾನ ಅವನನ್ನು ದೇವರ ಸನ್ನಿಧಿಗೆ ಕರೆದುಕೊಂಡು ಬಂದು ಕದದ ಹತ್ತಿರ ಅಥವಾ ಬಾಗಿಲಿನ ನಿಲುವು ಪಟ್ಟಿಗಳ ಹತ್ತಿರ ನಿಲ್ಲಿಸಿ ದಬ್ಬಳದಿಂದ ಅವನ ಕಿವಿಚುಚ್ಚಬೇಕು. ಅಂದಿನಿಂದ ಯಜಮಾನನಿಗೆ ಶಾಶ್ವತ ಗುಲಾಮನಾಗಿರುವನು.</verse>
				<verse number="7">“ಯಾರಾದರು ತನ್ನ ಮಗಳನ್ನು ದಾಸಿಯಾಗುವುದಕ್ಕೆ ಮಾರಿದರೆ ಗಂಡು ಗುಲಾಮರು ಬಿಡುಗಡೆಯಾಗಿ ಹೋಗುವಂತೆ ಅವಳು ಬಿಡುಗಡೆಯಾಗಿ ಹೋಗಕೂಡದು.</verse>
				<verse number="8">ಅವಳನ್ನು ತನಗಾಗಿ ಗೊತ್ತುಮಾಡಿಕೊಂಡ ಯಜಮಾನನಿಗೆ ಅವಳಲ್ಲಿ ಇಷ್ಟವಿಲ್ಲದೆ ಹೋದರೆ ಅವನಿಂದ ಬಿಡಿಸಿಕೊಳ್ಳಲು ಅವಳಿಗೆ ಅವಕಾಶಕೊಡಬೇಕು. ಅವನು ಕೊಟ್ಟ ಮಾತನ್ನು ತಪ್ಪಿದವನಾದುದರಿಂದ ಅನ್ಯಜನರಿಗೆ ಅವಳನ್ನು ಮಾರುವುದಕ್ಕೆ ಅವನಿಗೆ ಅಧಿಕಾರವಿಲ್ಲ.</verse>
				<verse number="9">ಅವನು ಅವಳನ್ನು ತನ್ನ ಮಗನಿಗೆ ಗೊತ್ತುಮಾಡಿಕೊಂಡರೆ ಅವಳನ್ನು ಸೊಸೆಯಂತೆ ಭಾವಿಸಬೇಕು.</verse>
				<verse number="10">ಯಜಮಾನ ಇನ್ನೊಬ್ಬಳನ್ನು ಸೇರಿಸಿಕೊಂಡರೂ ಮೊದಲನೆಯವಳಿಗೆ ಅನ್ನ, ಬಟ್ಟೆ, ದಾಂಪತ್ಯದ ಹಕ್ಕುಗಳನ್ನು ಕಡಿಮೆ ಮಾಡಕೂಡದು.</verse>
				<verse number="11">ಈ ಮೂವರಲ್ಲಿ ಯಾವುದನ್ನು ನಡೆಸದೆ ಹೋದರೆ ಅವಳು ಏನೂ ಕೊಡದೆ ಬಿಡುಗಡೆಯಾಗಿ ಹೋಗಬಹುದು.</verse>
				<verse number="12">“ಮನುಷ್ಯನನ್ನು ಹೊಡೆದು ಕೊಂದವನಿಗೆ ಮರಣದಂಡನೆಯಾಗಬೇಕು.</verse>
				<verse number="13">ಆದರೆ ಕೊಲ್ಲಬೇಕೆಂಬ ಯೋಚನೆಯಿಲ್ಲದೆ ಆಕಸ್ಮಿಕವಾಗಿ ಒಬ್ಬನ ಹತ್ಯ ಆಗಿದ್ದರೆ ಆ ಹತ್ಯೆಗೆ ಕಾರಣವಾದವನು ನಾನು ನೇಮಿಸುವ ಆಶ್ರಯ ಸ್ಥಳಕ್ಕೆ ಓಡಿಹೋಗಿ ಬದುಕಬಹುದು.</verse>
				<verse number="14">ಕೊಲ್ಲಬೇಕೆಂಬ ಉದ್ದೇಶದಿಂದಲೆ ಮತ್ತೊಬ್ಬನನ್ನು ಮೋಸದಿಂದ ಕೊಂದವನನ್ನು ನನ್ನ ಬಲಿಪೀಠದ ಬಳಿಯಿದ್ದರೂ ಎಳೆದು ಅವನಿಗೆ ಮರಣ ದಂಡನೆ ಕೊಡಬೇಕು.”</verse>
				<verse number="15">“ತಂದೆಯನ್ನಾಗಲಿ, ತಾಯಿಯನ್ನಾಗಲಿ ಹೊಡೆದವನಿಗೆ ಮರಣ ದಂಡನೆ ಆಗಬೇಕು.”</verse>
				<verse number="16">“ಒಬ್ಬನು ಮತ್ತೊಬ್ಬನನ್ನು ಕದ್ದೊಯ್ದು ಅವನನ್ನು ಮಾರಿದ್ದರೂ ಅಥವಾ ತನ್ನಲ್ಲೇ ಖೈದಿಯಾಗಿಟ್ಟುಕೊಂಡಿದ್ದರೂ ಅಂಥವನಿಗೆ ಮರಣ ದಂಡನೆಯಾಗಬೇಕು.”</verse>
				<verse number="17">“ತಂದೆಯನ್ನಾಗಲಿ, ತಾಯಿಯನ್ನಾಗಲಿ ಶಪಿಸುವವನಿಗೆ ಮರಣ ದಂಡನೆ ಆಗಬೇಕು.”</verse>
				<verse number="18">“ಇಬ್ಬರು ಜಗಳವಾಡುತ್ತಿರಲು ಒಬ್ಬನು ಮತ್ತೊಬ್ಬನನ್ನು ಕಲ್ಲಿನಿಂದಲೋ ಮುಷ್ಟಿಯಿಂದಲೋ ಹೊಡೆದುದರಿಂದ ಅವನು ಸಾಯದೆ ಗಾಯಗೊಂಡು ‘ಕೆಲವು ಕಾಲ ಹಾಸಿಗೆ ಹಿಡಿದಿರಬಹುದು, ಅನಂತರ ಎದ್ದು ಕೋಲೂರಿ ತಿರುಗಾಡುತ್ತಿರಬಹುದು.</verse>
				<verse number="19">ಇಂಥ ಸಂದರ್ಭಗಳಲ್ಲಿ ಹೊಡೆದವನಿಗೆ ಶಿಕ್ಷೆಯಾಗಬಾರದು. ಆದರೆ ಗಾಯಗೊಂಡವನು ಕೆಲಸ ಮಾಡಲಾರದೆ ಹೋದ ಕಾಲಕ್ಕೆ ತಕ್ಕಷ್ಟು ಹಣ ಕೊಡಬೇಕು. ಹಾಗು ಅವನು ಪೂರ್ಣ ಸ್ವಸ್ಥನಾಗುವ ವರೆಗೂ ನೋಡಿಕೊಳ್ಳಬೇಕು.</verse>
				<verse number="20">“ಒಬ್ಬನು ತನ್ನ ದಾಸನನ್ನಾಗಲಿ, ದಾಸಿಯನ್ನಾಗಲಿ ಕೋಲಿನಿಂದ ಹೊಡೆದು ಅಲ್ಲೇ ಸಾಯುವಂತೆ ಮಾಡಿದ್ದರೆ ಅವನಿಗೆ ತಕ್ಕ ಶಿಕ್ಷೆಯಾಗಬೇಕು.</verse>
				<verse number="21">ಆ ಆಳು ಒಂದೆರಡು ದಿನ ಜೀವದಿಂದ ಉಳಿದಿದ್ದರೆ ಯಜಮಾನನಿಗೆ ಶಿಕ್ಷೆ ವಿಧಿಸಬಾರದು. ಆ ದಾಸದಾಸಿಯರು ಅವನ ಸೊತ್ತು.</verse>
				<verse number="22">“ಜನರು ಜಗಳವಾಡುವಾಗ ಗರ್ಭಿಣಿಯಾದ ಒಬ್ಬ ಹೆಂಗಸಿಗೆ ಏಟು ತಗಲಿ ಅವಳಿಗೆ ಗರ್ಭಸ್ರಾವ ಆಗಿ, ಬೇರೆ ಯಾವ ಹಾನಿಯೂ ಆಕೆಗೆ ಆಗದೆ ಇದ್ದಲ್ಲಿ, ಆ ಹೆಂಗಸಿನ ಗಂಡನು ನ್ಯಾಯಾಧಿಪತಿಗಳ ಸಮ್ಮತಿಯಿಂದ ಎಷ್ಟು ಹಣವನ್ನು ಗೊತ್ತುಮಾಡುತ್ತಾನೋ ಅಷ್ಟನ್ನು ಹೊಡೆದವನು ಕೊಡಬೇಕು.</verse>
				<verse number="23">ಬೇರೆ ಹಾನಿಯಾದ ಪಕ್ಷಕ್ಕೆ ಪ್ರಾಣಕ್ಕೆ ಪ್ರತಿಯಾಗಿ ಪ್ರಾಣ,</verse>
				<verse number="24">ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು,</verse>
				<verse number="25">ಬರೆಗೆ ಬರೆ, ಗಾಯಕ್ಕೆ ಗಾಯ, ಏಟಿಗೆ ಏಟು ಈ ಮೇರೆಗೆ ಪ್ರತಿದಂಡನೆಯಾಗಬೇಕು.</verse>
				<verse number="26">ಒಬ್ಬನು ತನ್ನ ದಾಸನ ಅಥವಾ ದಾಸಿಯ ಕಣ್ಣಿಗೆ ಹೊಡೆದು ನಷ್ಟಪಡಿಸಿದರೆ ಆ ಕಣ್ಣಿಗೆ ಈಡಾಗಿ ಆ ದಾಸನನ್ನು ಬಿಡುಗಡೆ ಮಾಡಬೇಕು.</verse>
				<verse number="27">ದಾಸನ ಅಥವಾ ದಾಸಿಯ ಹಲ್ಲನ್ನು ಹೊಡೆದು ಉದುರಿಸಿದರೆ ಅದಕ್ಕೆ ಈಡಾಗಿ ಆ ದಾಸನನ್ನು ಅಥವಾ ದಾಸಿಯನ್ನು ಬಿಡುಗಡೆಮಾಡಬೇಕು.</verse>
				<verse number="28">“ಎತ್ತೊಂದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ತಿವಿದು ಕೊಂದರೆ ಆ ಎತ್ತನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕು. ಅದರ ಮಾಂಸವನ್ನು ತಿನ್ನಕೂಡದು. ಆ ಎತ್ತಿನ ಒಡೆಯನಾದರೋ ದೋಷಿಯಾಗಲಾರನು.</verse>
				<verse number="29">ಆದರೆ ಆ ಎತ್ತು ಹಿಂದಿನಿಂದಲೂ ತಿವಿಯುವ ಸ್ವಭಾವದ್ದೆಂದು ಒಡೆಯನಿಗೆ ಎಚ್ಚರಿಕೆ ನೀಡಿದ್ದರೂ ಅವನು ಅದನ್ನು ಕಟ್ಟಿಹಾಕದೆ ಹೋದ ಕಾರಣ ಅದು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಸಾಯಿಸಿದರೆ ಆ ಎತ್ತನ್ನು ಕಲ್ಲೆಸೆದು ಕೊಲ್ಲಬೇಕು, ಮಾತ್ರವಲ್ಲ ಆ ಒಡೆಯನು ಕೂಡ ಮರಣದಂಡನೆಗೆ ಗುರಿ ಆಗುವನು.</verse>
				<verse number="30">ಆದರೆ ಆ ಒಡೆಯ ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವುದಕ್ಕೆ ಹಣವನ್ನು ಈಡಾಗಿ ಕೊಡಬಹುದೆಂದು ತೀರ್ಮಾನವಾದರೆ ನೇಮಕವಾದ ಹಣವನ್ನು ಕೊಟ್ಟು ಅವನು ತನ್ನ ಪ್ರಾಣವನ್ನು ಉಳಿಸಿಕೊಳ್ಳಬಹುದು.</verse>
				<verse number="31">ಆ ಎತ್ತಿನಿಂದ ತಿವಿಸಿಕೊಂಡು ಸತ್ತವನು ಹುಡುಗನಾಗಿದ್ದರೂ ಹುಡುಗಿಯಾಗಿದ್ದರೂ ಇದೇ ನಿಯಮಕ್ಕನುಸಾರ ತೀರ್ಮಾನಿಸಬೇಕು.</verse>
				<verse number="32">ತಿವಿಸಿಕೊಂಡು ಸತ್ತವರು ದಾಸದಾಸಿಯರಾಗಿದ್ದರೆ ಅವರ ಯಜಮಾನನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ಈಡುಕೊಡಿಸಬೇಕು ಮತ್ತು ಆ ಎತ್ತನ್ನು ಕಲ್ಲೆಸೆದು ಕೊಲ್ಲಿಸಬೇಕು.</verse>
				<verse number="33">“ಒಬ್ಬನು ಗುಣಿ ತೆಗೆದುದರಿಂದ, ಇಲ್ಲವೆ ಗುಣಿ ಅಗೆದು ಮುಚ್ಚದೆ ಹೋದುದರಿಂದ, ಮತ್ತೊಬ್ಬನ ಎತ್ತಾಗಲಿ ಕತ್ತೆಯಾಗಲಿ ಅದರಲ್ಲಿ ಬಿದ್ದು ಸತ್ತರೆ</verse>
				<verse number="34">ಆ ಗುಣಿ ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡುಕೊಡಬೇಕು. ಆ ಪ್ರಾಣಿಯ ಒಡೆಯನಿಗೆ ಅದರ ಕ್ರಯವನ್ನು ಕೊಡಬೇಕು. ಸತ್ತ ಪ್ರಾಣಿಯನ್ನು ತಾನೇ ತೆಗೆದುಕೊಳ್ಳಬಹುದು.</verse>
				<verse number="35">ಒಬ್ಬನ ಎತ್ತು ಮತ್ತೊಬ್ಬನ ಎತ್ತನ್ನು ತಿವಿದುಕೊಂದರೆ ಜೀವದಿಂದಿರುವ ಎತ್ತನ್ನು ಮಾರಿ ಅದರ ಕ್ರಯವನ್ನು ಸಮವಾಗಿ ಹಂಚಬೇಕು.</verse>
				<verse number="36">ಆದರೆ ಅದಕ್ಕೆ ಮುಂಚಿತವಾಗಿಯೇ ಆ ಎತ್ತು ತಿವಿಯುವಂಥದ್ದೇ ಎಂದು ತಿಳಿದಿದ್ದರೂ ಅದರ ಒಡೆಯ ಅದನ್ನು ಕಟ್ಟಿಹಾಕದೆ ಹೋದದ್ದಾದರೆ ಅವನು ಎತ್ತಿಗೆ ಪ್ರತಿಯಾಗಿ ಎತ್ತನ್ನು ಕೊಡಬೇಕು; ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.</verse>
			</chapter>
			<chapter number="22">
				<verse number="1">“ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದುಕೊಂಡು ಕೊಯ್ದರೆ, ಇಲ್ಲವೆ ಮಾರಿದರೆ ಅವನು ಒಂದು ಎತ್ತಿಗೆ ಪ್ರತಿಯಾಗಿ ಐದು ಎತ್ತುಗಳನ್ನು ಒಂದು ಕುರಿಗೆ ಪ್ರತಿಯಾಗಿ ನಾಲ್ಕು ಕುರಿಗಳನ್ನು ಕೊಡಬೇಕು.</verse>
				<verse number="2">ಕಳ್ಳನು ಕನ್ನ ಕೊರೆಯುತ್ತಿರುವಾಗಲೆ ಕೈಗೆ ಸಿಕ್ಕಿ ಕೊಲ್ಲಲ್ಪಟ್ಟರೆ ಅದನ್ನು ನರಹತ್ಯವೆಂದು ಎಣಿಸಕೂಡದು.</verse>
				<verse number="3">ಸೂರ್ಯೋದಯವಾದ ನಂತರ ಒಬ್ಬನು ಕಳ್ಳನನ್ನು ಹೊಡೆದುಕೊಂದರೆ ಅದು ನರಹತ್ಯವೇ ಸರಿ. ಕಳ್ಳನು ಕದ್ದದ್ದನ್ನೆಲ್ಲಾ ಪೂರ್ತಿಯಾಗಿ ಕೊಡಬೇಕು. ಅವನಲ್ಲಿ ಕೊಡಲು ಏನೂ ಇಲ್ಲದಿದ್ದರೆ ಮಾಡಿದ ಕಳ್ಳತನಕ್ಕಾಗಿ ಅವನನ್ನು ಗುಲಾಮನನ್ನಾಗಿ ಮಾರಬೇಕು.</verse>
				<verse number="4">ಕಳ್ಳನು ಕದ್ದದ್ದು ಎತ್ತೋ, ಕತ್ತೆಯೋ, ಆಡುಕುರಿಯೋ ಆಗಿದ್ದು, ಅದು ಜೀವದಿಂದಲೇ ಅವನ ಬಳಿ ಸಿಕ್ಕಿದರೆ, ಅವನು ಎರಡರಷ್ಟು ಈಡು ಕೊಡಬೇಕು.</verse>
				<verse number="5">“ಒಬ್ಬನು ತನ್ನ ಹೊಲದಲ್ಲಾಗಲಿ, ದ್ರಾಕ್ಷಿತೋಟದಲ್ಲಾಗಲಿ ದನಗಳನ್ನು ಮೇಯಿಸಿ ಅವು ಮತ್ತೊಬ್ಬನ ಹೊಲಕ್ಕೆ ಹೋಗಿ ಮೇಯುವಂತೆ ಮಾಡಿದರೆ, ತನ್ನ ಹೊಲದ ಅಥವಾ ದ್ರಾಕ್ಷಿತೋಟದ ಉತ್ತಮ ಫಸಲಿನಿಂದ ಅವನಿಗೆ ಈಡು ಕೊಡಬೇಕು.</verse>
				<verse number="6">“ಒಬ್ಬನು ಹೊತ್ತಿಸಿದ ಬೆಂಕಿ ಆಕಸ್ಮಿಕವಾಗಿ ಮುಳ್ಳಿನ ಗಿಡಗಳಿಗೆ ಹತ್ತಿ ಅಲ್ಲಿಂದ ಮತ್ತೊಬ್ಬನ ದವಸದ ರಾಶಿಗಳಾಗಲಿ, ಬೆಳೆಯಾಗಲಿ, ಹೊಲವಾಗಲಿ ಸುಟ್ಟುಹೋದರೆ, ಬೆಂಕಿ ಹೊತ್ತಿಸಿದವನು ಈಡುಕೊಡಬೇಕು.</verse>
				<verse number="7">“ಒಬ್ಬನು ಹಣವನ್ನಾಗಲಿ, ಒಡವೆಗಳನ್ನಾಗಲಿ ಸುರಕ್ಷಿತವಾಗಿಡಲು ಮತ್ತೊಬ್ಬನಿಗೆ ಒಪ್ಪಿಸಿದಾಗ ಅದು ಆ ವ್ಯಕ್ತಿಯ ಮನೆಯಲ್ಲಿ ಕಳುವಾಗಿ ಹೋದರೆ ಕಳ್ಳನು ಸಿಕ್ಕಿಕೊಂಡರೆ, ಎರಡರಷ್ಟು ದಂಡ ಕೊಡಬೇಕು.</verse>
				<verse number="8">ಕಳ್ಳನು ಸಿಕ್ಕದೆ ಹೋದರೆ ಆ ಮನೆಯ ಯಜಮಾನ ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ನಿಶ್ಚಯಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.</verse>
				<verse number="9">“ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದು ವಿಷಯದಲ್ಲೂ, ಅದು ಎತ್ತು, ಕತ್ತೆ, ಕುರಿ ಅಥವಾ ಬಟ್ಟೆ ವಿಷಯವಾದರೂ ಸರಿಯೇ ಕಳೆದುಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ ಸರಿಯೇ, ಇಬ್ಬರೂ ಅದು ತಮ್ಮದೆಂದು ಹೇಳುವಾಗ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುತ್ತಾರೋ ಅವನು ಆ ಮತ್ತೊಬ್ಬನಿಗೆ ಎರಡರಷ್ಟು ಕೊಡಬೇಕು.</verse>
				<verse number="10">“ಒಬ್ಬನು ಮತ್ತೊಬ್ಬನ ಕತ್ತೆಯನ್ನಾಗಲಿ ಎತ್ತನ್ನಾಗಲಿ ಕುರಿಯನ್ನಾಗಲಿ, ಬೇರೆ ಯಾವ ಪ್ರಾಣಿಯನ್ನೇ ಆಗಲಿ ತನ್ನ ಬಳಿಯಿಂದ ಸುರಕ್ಷಿತವಾಗಿಟ್ಟುಕೊಳ್ಳಲು ಒಪ್ಪಿಕೊಂಡ ಮೇಲೆ ಅದು ಸತ್ತರೆ, ಗಾಯಗೊಂಡರೆ, ಇಲ್ಲವೆ ಯಾರೂ ತಿಳಿಯದಂತೆ ಸುಲಿಗೆಯಾದರೆ</verse>
				<verse number="11">ಆ ವ್ಯಕ್ತಿ ತಾನೇ ಆ ಸೊತ್ತಿನ ವಿಷಯದಲ್ಲಿ ಮೋಸಮಾಡಲಿಲ್ಲವೆಂಬುದನ್ನು ದೃಢಪಡಿಸಲು ಸರ್ವೇಶ್ವರನ ಮೇಲೆ ಪ್ರಮಾಣ ಮಾಡಬೇಕು. ಪ್ರಾಣಿಯ ಒಡೆಯನು ಆ ಪ್ರಮಾಣ ವಾಕ್ಯವನ್ನು ನಂಬಬೇಕು. ಪ್ರಮಾಣ ಮಾಡುವವನು ಈಡು ಕೊಡಬೇಕಾದ ಅಗತ್ಯವಿರುವುದಿಲ್ಲ.</verse>
				<verse number="12">ಆದರೆ ಪ್ರಾಣಿಯು ಕಳವಾದರೆ ಆ ವ್ಯಕ್ತಿ ಅದರ ಒಡೆಯನಿಗೆ ಈಡು ಕೊಡಬೇಕು.</verse>
				<verse number="13">ಕಾಡುಮೃಗ ಅದನ್ನು ಕೊಂದಿದ್ದರೆ ಅದರ ಅವಶೇಷವನ್ನು ಆಧಾರವಾಗಿ ತೋರಿಸಲಿ. ಕಾಡುಮೃಗದಿಂದ ಕೊಂದುದಕ್ಕೆ ಈಡುಕೊಡಬೇಕಾದ ಅವಶ್ಯಕತೆ ಇಲ್ಲ.</verse>
				<verse number="14">“ಒಬ್ಬನು ಮತ್ತೊಬ್ಬನಿಂದ ಪಶುಪ್ರಾಣಿಯನ್ನು ಕೊಂಚಕಾಲಕ್ಕೆ ಎರವಲಾಗಿ ತೆಗೆದುಕೊಂಡಿರುವಾಗ ಆ ಪ್ರಾಣಿಯ, ಒಡೆಯನು ಹತ್ತಿರವಿಲ್ಲದ ಸಮಯದಲ್ಲಿ ಗಾಯಗೊಂಡರೆ ಅಥವಾ ಸತ್ತುಹೋದರೆ ಸಾಲ ತೆಗೆದುಕೊಂಡವನು ಈಡುಕೊಡಬೇಕು.</verse>
				<verse number="15">ಒಡೆಯನು ಅದರ ಹತ್ತಿರದಲ್ಲೇ ಇದ್ದರೆ ಅವನಿಗೆ ಈಡು ಕೊಡಬೇಕಾದ ಅವಶ್ಯಕತೆ ಇಲ್ಲ. ಅದನ್ನು ಬಾಡಿಗೆಗೆ ತೆಗೆದುಕೊಂಡಿದ್ದರೆ ಅದಕ್ಕೆ ಉಂಟಾದ ನಷ್ಟವು ಬಾಡಿಗೆಯ ಲೆಕ್ಕಕ್ಕೆ ಎಣಿಕೆಯಾಗಿರಬೇಕು.</verse>
				<verse number="16">“ನಿಶ್ಚಿತಾರ್ಥವಾಗದ ಹೆಣ್ಣನ್ನು ಒಬ್ಬನು ಮರುಳುಗೊಳಿಸಿ ಅವಳನ್ನು ಕೂಡಿದರೆ ಅವಳಿಗಾಗಿ ತೆರವನ್ನು ಕೊಟ್ಟು ಅವಳನ್ನು ಮದುವೆ ಮಾಡಿಕೊಳ್ಳಬೇಕು.</verse>
				<verse number="17">ಅವಳ ತಂದೆ ಅವಳನ್ನು ಅವನಿಗೆ ಕೊಡಲು ಒಪ್ಪದೆ ಹೋದರೆ ಆ ವ್ಯಕ್ತಿ ತಕ್ಕ ತೆರವನ್ನು ಹೇಗೂ ಕೊಡಬೇಕು.</verse>
				<verse number="18">“ಮಾಟಗಾರ್ತಿಯನ್ನು ಬದುಕಲು ಬಿಡಬಾರದು.</verse>
				<verse number="19">“ಪ್ರಾಣಿಪಶು ಸಂಗಮಾಡಿದವನಿಗೆ ಮರಣದಂಡನೆಯಾಗಬೇಕು.</verse>
				<verse number="20">“ಸರ್ವೇಶ್ವರನಾದವನಿಗೆ ಹೊರತಾಗಿ ಬೇರೊಬ್ಬ ದೇವರಿಗೆ ಬಲಿ ಕೊಡುವವನು ನಾಶಕ್ಕೆ ಅರ್ಹನು.</verse>
				<verse number="21">“ಪರದೇಶೀಯನಿಗೆ ಅನ್ಯಾಯ ಮಾಡಬಾರದು, ಅವನನ್ನು ಪೀಡಿಸಬಾರದು. ನೀವು ಕೂಡ ಈಜಿಪ್ಟಿನಲ್ಲಿ ಪರದೇಶೀಯರಾಗಿದ್ದೀರಲ್ಲವೆ?</verse>
				<verse number="22">ವಿಧವೆಯರನ್ನಾಗಲಿ ದಿಕ್ಕಿಲ್ಲದ ಮಕ್ಕಳನ್ನಾಗಲಿ ಬಾಧಿಸಬಾರದು.</verse>
				<verse number="23">ನೀವು ಇಂಥವರನ್ನು ಬಾಧಿಸಿದರೆ ಅವರು ನನಗೆ ಮೊರೆಯಿಡುವರು. ಆ ಮೊರೆಗೆ ನಾನು ಕಿವಿಗೊಡದೆ ಇರೆನೆಂಬುದು ನಿಮಗೆ ತಿಳಿದಿರಲಿ.</verse>
				<verse number="24">ನಾನು ಕೋಪಗೊಂಡು ನಿಮ್ಮನ್ನು ಶತ್ರುಗಳ ಕೈಯಿಂದ ಸಂಹಾರ ಮಾಡಿಸುವೆನು. ನಿಮ್ಮ ಹೆಂಡತಿಯರು ವಿಧವೆಗಳಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.</verse>
				<verse number="25">“ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಸಾಲಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.</verse>
				<verse number="26">“ನೀನು ಒಬ್ಬನ ಕಂಬಳಿಯನ್ನು ಅಡವು ಇಟ್ಟುಕೊಂಡರೆ ಸೂರ್ಯನು ಮುಳುಗುವಷ್ಟರಲ್ಲಿ ಅದನ್ನು ಹಿಂದಕ್ಕೆ ಕೊಡು.</verse>
				<verse number="27">ಏಕೆಂದರೆ ಅವನಿಗಿರುವ ಹೊದಿಕೆ ಅದೊಂದೇ; ಅದನ್ನೇ ಮೈಗೆ ಸುತ್ತಿಕೊಳ್ಳಬೇಕು; ಬೇರೆ ಯಾವುದನ್ನು ಹೊದ್ದುಕೊಂಡು ಮಲಗಾನು? ಅವನು ನನಗೆ ಮೊರೆಯಿಟ್ಟರೆ ಕಿವಿಗೊಡುವೆನು. ಏಕೆಂದರೆ ನಾನು ದಯಾಮಯನು.</verse>
				<verse number="28">“ದೇವರನ್ನು ದೂಷಿಸಬಾರದು; ನಿಮ್ಮ ಜನನಾಯಕನನ್ನು ಶಪಿಸಬಾರದು.</verse>
				<verse number="29">“ನಿಮ್ಮ ಕಣದಿಂದ ಹಾಗು ಆಲೆಯಿಂದ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸಲು ತಡಮಾಡಬಾರದು.</verse>
				<verse number="30">“ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಸಮರ್ಪಿಸಬೇಕು. ಅಂತೆಯೇ ನಿಮ್ಮ ದನಕುರಿಗಳ ಚೊಚ್ಚಲು ಮರಿಗಳನ್ನು ನನಗೆ ಸಮರ್ಪಿಸಬೇಕು. ಏಳುದಿವಸ ಆ ಮರಿ ತಾಯಿಯ ಹತ್ತಿರ ಇರಲಿ. ಎಂಟನೆಯ ದಿನದಲ್ಲಿ ಅದನ್ನು ನನಗೆ ಸಮರ್ಪಿಸಬೇಕು.</verse>
				<verse number="31">“ನೀವು ನನಗೆ ಪರಿಶುದ್ಧ ಜನರಾಗಿರಬೇಕು. ಆದ್ದರಿಂದ ಕಾಡುಮೃಗ ಕೊಂದದ್ದನ್ನು ತಿನ್ನಬಾರದು; ಅದನ್ನು ನಾಯಿಗಳಿಗೆ ಬಿಡಬೇಕು.</verse>
			</chapter>
			<chapter number="23">
				<verse number="1">“ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರ ಸಹಾಯಕ್ಕಾಗಿ ನ್ಯಾಯ ವಿರುದ್ಧವಾದ ಸಾಕ್ಷಿಯನ್ನು ನುಡಿಯಬಾರದು.</verse>
				<verse number="2">ಕೆಟ್ಟ ಕಾರ್ಯವನ್ನು ಮಾಡುವವರು ಬಹು ಮಂದಿ ಇದ್ದಾರೆ. ಆದರೂ ನೀವು ಅವರ ಜೊತೆ ಸೇರಬಾರದು. ಬಹು ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳಬಾರದು.</verse>
				<verse number="3">ಅಲ್ಲದೆ ಬಡವನ ಮೇಲಿನ ಕರುಣೆಯಿಂದ ಪಕ್ಷಪಾತದ ತೀರ್ಮಾನವನ್ನು ಮಾಡಬಾರದು.</verse>
				<verse number="4">“ನಿನ್ನ ವೈರಿಯ ಎತ್ತಾಗಲಿ ಕತ್ತೆಯಾಗಲಿ ತಪ್ಪಿಸಿಕೊಂಡು ತಿರುಗಾಡುವಾಗ ಅದು ನಿನಗೆ ಸಿಕ್ಕಿದರೆ ಅದನ್ನು ಅವನ ಬಳಿಗೆ ಹೊಡೆದುಕೊಂಡು ಹೋಗಿ ಒಪ್ಪಿಸಬೇಕು.</verse>
				<verse number="5">ನಿನ್ನ ಹಗೆಯವನ ಕತ್ತೆ ಹೊರೆಯನ್ನು ತಾಳದೆ ಕೆಳಗೆ ಬಿದ್ದಿರುವುದನ್ನು ಕಂಡರೆ ಅದನ್ನು ಎಬ್ಬಿಸುವುದಕ್ಕೆ ನಿನಗೆ ಮನಸ್ಸಿಲ್ಲದಿದ್ದರೂ ಅವನಿಗೆ ಸಹಾಯ ಮಾಡಿ ಅದನ್ನು ಎಬ್ಬಿಸಲೇ ಬೇಕು.</verse>
				<verse number="6">“ನಿಮ್ಮಲ್ಲಿರುವ ಬಡವರು ನ್ಯಾಯಕೋರಿ ಬರುವಾಗ ಅವರಿಗೆ ನೀವು ನ್ಯಾಯ ತಪ್ಪಿಸಬಾರದು. ಮೋಸದ ಕಾರ್ಯದಿಂದ ದೂರವಿರಬೇಕು;</verse>
				<verse number="7">ನಿರಪರಾಧಿಯೂ ನೀತಿವಂತನೂ ಆದ ವ್ಯಕ್ತಿಗೆ ಮರಣದಂಡನೆ ವಿಧಿಸಲೇಕೂಡದು; ಅಂಥ ದುಷ್ಕೃತ್ಯ ಮಾಡಿದವನಿಗೆ ನಾನು ಶಿಕ್ಷೆ ವಿಧಿಸದೆ ಬಿಡುವುದಿಲ್ಲ.</verse>
				<verse number="8">ಲಂಚವನ್ನು ತೆಗೆದುಕೊಳ್ಳಬಾರದು. ಲಂಚವು ಕಣ್ಣುಳ್ಳವರನ್ನು ಕುರುಡರನ್ನಾಗಿಸುತ್ತದೆ; ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ಕೆಡಿಸುತ್ತದೆ.</verse>
				<verse number="9">“ಪರದೇಶೀಯರನ್ನು ಪೀಡಿಸಬಾರದು. ನೀವು ಕೂಡ ಈಜಿಪ್ಟಿನಲ್ಲಿ ಪರದೇಶೀಯರಾಗಿದ್ದಿರಲ್ಲವೆ? ಅಂಥವರ ಮನೋವ್ಯಥೆ ನಿಮಗೆ ಗೊತ್ತೇ ಇದೆ.</verse>
				<verse number="10">“ಆರು ವರ್ಷ ನಿಮ್ಮ ಹೊಲಗದ್ದೆಗಳಲ್ಲಿ ಬಿತ್ತನೆಮಾಡಿ ಬೆಳೆತೆಗೆದುಕೊಳ್ಳಿ.</verse>
				<verse number="11">“ಆದರೆ ಏಳನೆಯ ವರ್ಷ ಆ ಭೂಮಿಯನ್ನು ಬೀಳುಬಿಡಿ. ನಿಮ್ಮ ನಾಡಿನ ಬಡವರು ಅದರಲ್ಲಿ ತಾನಾಗಿ ಬೆಳೆಯುವುದನ್ನು ತಿನ್ನಲಿ. ಮಿಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳಲ್ಲಿ ಹಾಗೂ ಎಣ್ಣೇ ಮರ ತೋಪುಗಳ ವಿಷಯದಲ್ಲೂ ಅದೇ ರೀತಿಯಾಗಿ ಮಾಡಿ.</verse>
				<verse number="12">ವಾರದಲ್ಲಿ ನೀವು ಆರು ದಿವಸ ಕೆಲಸಮಾಡಿ. ಏಳನೆಯ ದಿವಸ ಯಾವ ಕೆಲಸವನ್ನೂ ಮಾಡದಿರಿ. ಆ ದಿನ ನಿಮ್ಮ ಎತ್ತುಗಳು, ಕತ್ತೆಗಳು, ದಾಸದಾಸಿಯರು ಹಾಗೂ ಪರದೇಶೀಯರು ವಿಶ್ರಮಿಸಿಕೊಳ್ಳಲಿ.</verse>
				<verse number="13">“ನಾನು ನಿಮಗೆ ವಿಧಿಸಿದ್ದನ್ನೆಲ್ಲ ಜಾಗರೂಕತೆಯಿಂದ ಅನುಸರಿಸಿ ನಡೆಯಿರಿ. ಬೇರೆ ಯಾವ ದೇವರ ಹೆಸರನ್ನು ಸ್ಮರಿಸಬೇಡಿ, ಉಚ್ಚರಿಸಲೂ ಬೇಡಿ.</verse>
				<verse number="14">“ನೀವು ವರ್ಷಕ್ಕೆ ಮೂರು ಸಾರಿ ನನಗೆ ಹಬ್ಬ ಮಾಡಬೇಕು.</verse>
				<verse number="15">ಹುಳಿಯಿಲ್ಲದ ರೊಟ್ಟಿ ತಿನ್ನುವ ಹಬ್ಬ ಒಂದು. ನಾನು ನಿಮಗೆ ಆಜ್ಞಾಪಿಸಿದಂತೆ ಚೈತ್ರಮಾಸದ ನಿಗದಿಯಾದ ಕಾಲದಲ್ಲಿ ಏಳು ದಿವಸವೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು. ಏಕೆಂದರೆ ಆ ಮಾಸದಲ್ಲೇ ನೀವು ಈಜಿಪ್ಟಿನಿಂದ ಹೊರಟುಬಂದದ್ದು. ನನ್ನ ಸನ್ನಿಧಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯಿಲ್ಲದೆ ಬರೀ ಕೈಯಲ್ಲಿ ಬರಕೂಡದು.</verse>
				<verse number="16">“ಅಲ್ಲದೆ ನೀವು ಬಿತ್ತನೆ ಮಾಡಿದ ಹೊಲಗದ್ದೆಗಳಲ್ಲಿ ಮೊದಲನೆಯ ಫಲ ದೊರೆತಾಗ ಸುಗ್ಗಿಯ ಹಬ್ಬವನ್ನು ಆಚರಿಸಬೇಕು. ವರ್ಷದ ಕೊನೆಯಲ್ಲಿ ಅಂದರೆ ಹೊಲ ತೋಟಗಳಿಂದ ನೀವು ಬೆಳೆಯನ್ನು ಕೂಡಿಸುವಾಗ, ಸುಗ್ಗಿಯ (ಫಲಸಂಗ್ರಹದ) ಹಬ್ಬವನ್ನು ಆಚರಿಸಬೇಕು.</verse>
				<verse number="17">ಹೀಗೆ ವರ್ಷಕ್ಕೆ ಮೂರು ಸಾರಿ ನಿಮ್ಮ ಗಂಡಸರೆಲ್ಲರು ಸರ್ವೇಶ್ವರನೂ ದೇವರೂ ಆದ ನನ್ನ ಸನ್ನಿಧಿಗೆ ಬರಬೇಕು.</verse>
				<verse number="18">“ನನಗೆ ಬಲಿಯನ್ನು ಅರ್ಪಿಸುವಾಗ ಆ ಬಲಿ ಪ್ರಾಣಿಯ ರಕ್ತದೊಡನೆ ಹುಳಿಯಾದ ಹಿಟ್ಟನ್ನು ಸಮರ್ಪಿಸಬಾರದು. ನನ್ನ ಹಬ್ಬದಲ್ಲಿ ನೀವು ನನಗೆ ಸಮರ್ಪಿಸಬೇಕಾದ ಪ್ರಾಣಿಯ ಕೊಬ್ಬನ್ನು ಮಾರನೆಯ ದಿನದವರೆಗೂ ಇಡಲೇಕೂಡದು.</verse>
				<verse number="19">“ನಿಮ್ಮ ಬೆಳೆಯ ಪ್ರಥಮ ಫಲದಲ್ಲಿ ಅತಿಶ್ರೇಷ್ಠವಾದುದ್ದನ್ನು ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಮಂದಿರಕ್ಕೆ ತರಬೇಕು. \ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.</verse>
				<verse number="20">“ಇಗೋ, ದಾರಿಯಲ್ಲಿ ನಿಮ್ಮನ್ನು ಕಾಪಾಡುವುದಕ್ಕೆ ಹಾಗು ನಾನು ಗೊತ್ತುಮಾಡಿರುವ ಸ್ಥಳಕ್ಕೆ ನಿಮ್ಮನ್ನು ಕರೆದುತರುವುದಕ್ಕೆ ಒಬ್ಬ ದೂತನನ್ನು ನಿಮ್ಮ ಮುಂದೆ ಕಳಿಸುತ್ತೇನೆ.</verse>
				<verse number="21">ನೀವು ಆತನಲ್ಲಿ ಲಕ್ಷ್ಯವಿಟ್ಟು ಮಾತಿಗೆ ಕಿವಿಗೊಡಬೇಕು. ಆತನಿಗೆ ಅವಿಧೇಯರಾಗಿ ಇರಬಾರದು. ಏಕೆಂದರೆ ಆತ ಬರುವುದು ನನ್ನ ಹೆಸರಿನಲ್ಲಿ. ನೀವು ಅವಿಧೇಯರಾದರೆ ಆತ ನಿಮ್ಮನ್ನು ಕ್ಷಮಿಸಲಾರನು.</verse>
				<verse number="22">ನೀವು ಆತನ ಮಾತನ್ನು ಶ್ರದ್ಧೆಯಿಂದ ಆಲಿಸಿ, ನನ್ನ ಆಶೆಗಳನ್ನೆಲ್ಲ ಪಾಲಿಸಿದರೆ ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮನ್ನು ಪೀಡಿಸುವವರನ್ನು ಪೀಡಿಸುವವನಾಗಿಯೂ ಇರುವೆನು.</verse>
				<verse number="23">ನನ್ನ ದೂತನು ನಿಮ್ಮ ಮುಂದೆ ನಡೆದು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಹಾಗೂ ಯೆಬೂಸಿಯರು ಇರುವ ನಾಡಿಗೆ ನಿಮ್ಮನ್ನು ಸೇರಿಸುವನು. ಅವರನ್ನಾದರೋ ನಾನು ನಿರ್ಮೂಲ ಮಾಡುವೆನು.</verse>
				<verse number="24">ಅವರ ದೇವತೆಗಳನ್ನು ನೀವು ನಮಸ್ಕರಿಸಬಾರದು, ಪೂಜಿಸಬಾರದು ಮಾತ್ರವಲ್ಲ ಅವರ ಆಚರಣೆಗಳನ್ನು ಅನುಸರಿಸಲೇಬಾರದು. ಆ ಜನಗಳನ್ನು ನಿರ್ಮೂಲ ಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.</verse>
				<verse number="25">ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನೊಬ್ಬನನ್ನೇ ಆರಾಧಿಸಬೇಕು. ಆಗ ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವೆನು. ನಿಮ್ಮೊಳಗೆ ಯಾವ ವ್ಯಾಧಿಯೂ ಇರದಂತೆ ಮಾಡುವೆನು.</verse>
				<verse number="26">ನಿಮ್ಮ ನಾಡಿನಲ್ಲಿ ಗರ್ಭಸ್ರಾವವಾಗಲಿ ಬಂಜೆತನವಾಗಲಿ ಇರುವುದಿಲ್ಲ. ನಿಮಗೆ ಪೂರ್ಣವಾದ ಆಯುಸ್ಸನ್ನು ಕೊಡುವೆನು.</verse>
				<verse number="27">ನೀವು ಹೋಗುವ ಎಲ್ಲ ಕಡೆಯಲ್ಲಿಯೂ ನಾನು ಜನಗಳ ಮನಸ್ಸಿನಲ್ಲಿ ಹೆದರಿಕೆಯನ್ನು ಹುಟ್ಟಿಸಿ, ಕಳವಳವನ್ನು ಉಂಟುಮಾಡಿ, ನಿಮ್ಮನ್ನು ವಿರೋಧಿಸುವವರು ಓಡಿಹೋಗುವಂತೆ ಮಾಡುವೆನು.</verse>
				<verse number="28">ನಿಮಗೆ ಮುಂಚಿತವಾಗಿ ಕಣಜದ ಹುಳುಗಳನ್ನು ಕಳಿಸುವೆನು. ಅವು, ಆ ಹಿವ್ವಿಯರು, ಕಾನಾನ್ಯರು ಹಾಗೂ ಹಿತ್ತಿಯರು ನಿಮ್ಮ ಮುಂದೆ ನಿಲ್ಲದಂತೆ ಓಡಿಸಿ ಬಿಡುವವು.</verse>
				<verse number="29">ಆದರೆ ನಾನು ಒಂದೇ ವರ್ಷದೊಳಗೆ ಅವರೆಲ್ಲರನ್ನು ಅಲ್ಲಿಂದ ಹೊರಡಿಸುವುದಿಲ್ಲ. ಏಕೆಂದರೆ ಆ ನಾಡಿನಲ್ಲಿ ಜನರು ಕಡಿಮೆಯಾಗುವುದರಿಂದ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಗೆ ಕಾರಣವಾಗಬಹುದು.</verse>
				<verse number="30">ನೀವು ಅಭಿವೃದ್ಧಿಯಾಗಿ ನಾಡಿನಲ್ಲೆಲ್ಲಾ ತುಂಬಿಕೊಳ್ಳುವ ತನಕ ಅವರನ್ನು ಸ್ವಲ್ಪ ಸ್ವಲ್ಪವಾಗಿ ಹೊರಡಿಸುತ್ತಿರುವೆನು.</verse>
				<verse number="31">ಕೆಂಪು ಸಮುದ್ರದಿಂದ ಫಿಲಿಷ್ಟಿಯರ ದೇಶದ ಬಳಿಯಿರುವ ಸಮುದ್ರದವರೆಗೂ ಮತ್ತು ಈ ಮರುಭೂಮಿಯಿಂದ ಯೂಫ್ರೆಟೀಸ್ ಮಹಾ ನದಿಯವರೆಗೂ ಇರುವ ನಾಡನ್ನೆಲ್ಲಾ ನಿಮಗೆ ನೇಮಿಸಿ ಅದರಲ್ಲಿರುವ ನಿವಾಸಿಗಳನ್ನು ನಿಮಗೆ ಅಧೀನಪಡಿಸುವೆನು.</verse>
				<verse number="32">ನೀವು ಅವರೊಡನೆಯಾಗಲಿ, ಅವರ ದೇವತೆಗಳೊಡನೆಯಾಗಲಿ ಯಾವ ವಿಧವಾದ ಒಪ್ಪಂದವನ್ನೂ ಮಾಡಿಕೊಳ್ಳಬಾರದು.</verse>
				<verse number="33">ಅವರು ನಿಮ್ಮ ನಾಡಿನಲ್ಲಿ ವಾಸವಾಗಿರಬಾರದು. ವಾಸವಾಗಿದ್ದರೆ ನನಗೆ ವಿರೋಧವಾಗಿ ನಿಮ್ಮಲ್ಲಿ ದ್ರೋಹಬುದ್ಧಿಯನ್ನು ಹುಟ್ಟಿಸಬಹುದು. ನೀವು ಅವರ ದೇವತೆಗಳನ್ನು ಪೂಜಿಸಿದರೆ ಆ ಪೂಜೆಯೆ ನಿಮಗೆ ಉರುಲಾಗುವುದು.</verse>
			</chapter>
			<chapter number="24">
				<verse number="1">ಸರ್ವೇಶ್ವರ ಸ್ವಾಮಿ ಮೋಶೆಗೆ, “ನೀನು, ಆರೋನ, ನಾದಾಬ್ ಹಾಗೂ ಅಬೀಹೂ ಮತ್ತು ಇಸ್ರಯೇಲರ ಹಿರಿಯರಲ್ಲಿ ಎಪ್ಪತ್ತು ಮಂದಿ ಈ ಬೆಟ್ಟವನ್ನು ಹತ್ತಿ ಸರ್ವೇಶ್ವರನಾದ ನನ್ನ ಬಳಿಗೆ ಬಂದು ದೂರದಲ್ಲೆ ನಿಂತು ಅಡ್ಡಬೀಳಬೇಕು.</verse>
				<verse number="2">ಮೋಶೆ ಒಬ್ಬನೇ ಹೊರತು ಅವನ ಜೊತೆಯವರಲ್ಲಿ ಯಾರೂ ನನ್ನ ಸಮೀಪಕ್ಕೆ ಬರಬಾರದು. ಮಿಕ್ಕ ಜನರು ಬೆಟ್ಟವನ್ನು ಹತ್ತಲೇಬಾರದು,” ಎಂದು ಹೇಳಿದರು.</verse>
				<verse number="3">ಮೋಶೆ ಜನರ ಬಳಿಗೆ ಬಂದು ಸರ್ವೇಶ್ವರನ ಎಲ್ಲ ಆಜ್ಞೆಗಳನ್ನೂ, ವಿಧಿವಿಧಾನಗಳನ್ನೂ ವಿವರಿಸಿದನು. ಜನರೆಲ್ಲರು, “ಸರ್ವೇಶ್ವರ ಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆಯುತ್ತೇವೆ” ಎಂದು ಒಕ್ಕೊರಳಿನಿಂದ ಉತ್ತರ ಕೊಟ್ಟರು.</verse>
				<verse number="4">ಮೋಶೆ ಸರ್ವೇಶ್ವರನ ಆಜ್ಞೆಗಳನ್ನೆಲ್ಲ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದಡಿಯಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಇಸ್ರಯೇಲರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆ ಮಾಡಿಸಿದನು.</verse>
				<verse number="5">ಇಸ್ರಯೇಲರ ಯೌವನಸ್ಥರು ಸರ್ವೇಶ್ವರ ಸ್ವಾಮಿಗೆ ದಹನಬಲಿಗಳನ್ನು ಅರ್ಪಿಸುವಂತೆಯೂ ಸಮಾಧಾನದ ಬಲಿಗಾಗಿ ಹೋರಿಗಳನ್ನು ಅರ್ಪಿಸುವಂತೆಯೂ ಅಪ್ಪಣೆಕೊಟ್ಟನು.</verse>
				<verse number="6">ಆ ಬಲಿಪಶುಗಳ ರಕ್ತದಲ್ಲಿ ಅರ್ಧವನ್ನು ತೆಗೆದು ಬಟ್ಟಲುಗಳಲ್ಲಿ ತುಂಬಿದನು. ಮಿಕ್ಕ ಅರ್ಧವನ್ನು, ಬಲಿಪೀಠದ ಮೇಲೆ ಪ್ರೋಕ್ಷಿಸಿದನು.</verse>
				<verse number="7">ತರುವಾಯ, ನಿಬಂಧನ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಅದನ್ನು ಕೇಳಿದ ಮೇಲೆ, “ಸರ್ವೇಶ್ವರ ಸ್ವಾಮಿಯ ಆಜ್ಞೆಗಳನ್ನೆಲ್ಲಾ ಅನುಸರಿಸುತ್ತೇವೆ; ಅವುಗಳಿಗೆ ವಿಧೇಯರಾಗಿರುತ್ತೇವೆ,” ಎಂದರು.</verse>
				<verse number="8">ಆಗ ಮೋಶೆ ಬಟ್ಟಲುಗಳಲ್ಲಿದ್ದ ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ, “ಇಗೋ, ಈ ಗ್ರಂಥದಲ್ಲಿ ಹೇಳಿರುವ ಎಲ್ಲ ಆಜ್ಞೆಗಳ ಪ್ರಕಾರ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತ ಇದೇ,” ಎಂದನು.</verse>
				<verse number="9">ಮೋಶೆ, ಆರೋನ್, ನಾದಾಬ್ ಹಾಗೂ ಅಬೀಹು ಮತ್ತು ಇಸ್ರಯೇಲರಲ್ಲಿ ಎಪ್ಪತ್ತು ಮಂದಿ ಬೆಟ್ಟವನ್ನು ಹತ್ತಿದರು.</verse>
				<verse number="10">ಅವರಿಗೆ ಇಸ್ರಯೇಲರ ದೇವರ ದರ್ಶನವಾಯಿತು. ಆಕಾಶ ಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಅವರ ಪಾದಪೀಠವಾಗಿತ್ತು.</verse>
				<verse number="11">ಅವರು ಇಸ್ರಯೇಲರ ಮುಖಂಡರಿಗೆ ಯಾವ ಹಾನಿಯನ್ನೂ ಮಾಡಲಿಲ್ಲ. ಆ ಮುಖಂಡರು ದೇವರನ್ನು ಸಂದರ್ಶಿಸಿದರು; ಬಳಿಕ ಅನ್ನಪಾನಗಳನ್ನು ತೆಗೆದುಕೊಂಡರು.</verse>
				<verse number="12">ಸರ್ವೇಶ್ವರ “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ಆ ಧರ್ಮಶಾಸ್ತ್ರವನ್ನು ಹಾಗು ಆಜ್ಞೆಗಳನ್ನು ನೀನು ಜನರಿಗೆ ಬೋಧಿಸುವಂತೆ ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಾನು ನಿನಗೆ ಕೊಡುತ್ತೇನೆ,” ಎಂದು ಮೋಶೆಗೆ ಹೇಳಿದರು.</verse>
				<verse number="13">ಮೋಶೆ ತನ್ನ ಶಿಷ್ಯನಾದ ಯೆಹೋಶುವನ ಸಮೇತ ಎದ್ದು ದೇವರ ಬೆಟ್ಟದ ಮೇಲಕ್ಕೆ ಹೋದನು.</verse>
				<verse number="14">ಇದಕ್ಕೆ ಮೊದಲು ಅವನು ಹಿರಿಯರಿಗೆ, “ನಾನು ತಿರುಗಿ ನಿಮ್ಮ ಬಳಿಗೆ ಬರುವ ತನಕ ನೀವು ಇಲ್ಲೆ ಕಾದುಕೊಂಡಿರಿ, ಆರೋನನು ಮತ್ತು ಹೂರನು ನಿಮ್ಮ ಬಳಿಯಲ್ಲೆ ಇರುವರು. ಇತ್ಯರ್ಥವಾಗಬೇಕಾದ ವಿಷಯವೇನಾದರೂ ಇದ್ದರೆ ಅವರ ಬಳಿ ಹೋಗಿ,” ಎಂದು ಹೇಳಿದನು.</verse>
				<verse number="15">ಬಳಿಕ ಮೋಶೆ ಬೆಟ್ಟವನ್ನು ಹತ್ತಿದನು. ಮೇಘವೊಂದು ಅದನ್ನು ಮುಚ್ಚಿಕೊಂಡಿತು.</verse>
				<verse number="16">ಸರ್ವೇಶ್ವರ ತೇಜಸ್ಸು ಸೀನಾಯಿ ಬೆಟ್ಟದ ಮೇಲೆ ನಿಂತಿತು. ಆ ಮೇಘವು ಆರು ದಿನಗಳವರೆಗೂ ಬೆಟ್ಟವನ್ನು ಆವರಿಸಿತ್ತು. ಏಳನೆಯ ದಿನ ಸರ್ವೇಶ್ವರ ಮೇಘ ಮಧ್ಯೆಯಿಂದ ಮೋಶೆಯನ್ನು ಕೂಗಿ ಕರೆದರು.</verse>
				<verse number="17">ಸರ್ವೇಶ್ವರನ ತೇಜಸ್ಸು ಬೆಟ್ಟದ ಶಿಖರದ ಮೇಲೆ ಪ್ರಜ್ವಲಿಸುವ ಬೆಂಕಿಯೋಪಾದಿಯಲ್ಲಿ ಇಸ್ರಯೇಲರಿಗೆ ಕಾಣಿಸಿತು.</verse>
				<verse number="18">ಮೋಶೆ ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಾಲ್ವತ್ತು ದಿವಸ ಹಗಲಿರುಳು ತಂಗಿದ್ದನು.</verse>
			</chapter>
			<chapter number="25">
				<verse number="1">ಮೋಶೆಗೆ ಸರ್ವೇಶ್ವರ ಸ್ವಾಮಿ ಹೀಗೆಂದು ಹೇಳಿದರು:</verse>
				<verse number="2">“ಇಸ್ರಯೇಲರು ನನಗಾಗಿ ಕಾಣಿಕೆಯನ್ನು ಮೀಸಲಿಡಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ಸ್ವೀಕರಿಸಬೇಕು.</verse>
				<verse number="3">ನೀನು ಅವರಿಂದ ಸ್ವೀಕರಿಸತಕ್ಕ ಕಾಣಿಕೆಗಳು ಇವು: ಚಿನ್ನ, ಬೆಳ್ಳಿ, ತಾಮ್ರ,</verse>
				<verse number="4">ನೀಲಿ, ಊದ ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಮಡಿಗಳು, ತುಪ್ಪಟದ ಬಟ್ಟೆಗಳು,</verse>
				<verse number="5">ಹದಮಾಡಿದ ಕೆಂಪುಬಣ್ಣದ ಕುರಿದೊಗಲುಗಳು, ಕಡಲುಹಂದಿಯ ತೊಗಲುಗಳು,</verse>
				<verse number="6">ಜಾಲೀಮರ, ದೀಪಕ್ಕೆ ಬೇಕಾದ ಎಣ್ಣೆ, ಅಭಿಷೇಕ ತೈಲಕ್ಕೆ ಹಾಗು ಪರಿಮಳ ಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳು,</verse>
				<verse number="7">ಪ್ರಧಾನ ಯಾಜಕನ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳು, ಮತ್ತು ಪದಕದ ಚೀಲದಲ್ಲಿ ಕೆತ್ತಬೇಕಾದ ನಾನಾ ರತ್ನಗಳು.</verse>
				<verse number="8">ನಾನು ಜನರ ಮಧ್ಯೆ ವಾಸಿಸುವುದಕ್ಕೆ ನನಗೊಂದು ಗುಡಾರವನ್ನು ಕಟ್ಟಿಸಬೇಕು.</verse>
				<verse number="9">ನಾನು ನಿಮಗೆ ತೋರಿಸುವ ಮಾದರಿಯ ಪ್ರಕಾರವೇ ಆ ಗುಡಾರವನ್ನೂ ಅದರಲ್ಲಿನ ಎಲ್ಲ ಸಾಮಾಗ್ರಿಗಳನ್ನೂ ಮಾಡಿಸಬೇಕು.</verse>
				<verse number="10">“ನೀನು ಜಾಲೀಮರದಿಂದ ಒಂದು ಮಂಜೂಷವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದ, ಒಂದುವರೆ ಮೊಳ ಅಗಲ, ಹಾಗು ಒಂದುವರೆ ಮೊಳ ಎತ್ತರವಾಗಿರಲಿ.</verse>
				<verse number="11">ಅಪ್ಪಟ ಬಂಗಾರದ ತಗಡುಗಳನ್ನು ಅದರ ಹೊರಗಡೆ ಮತ್ತು ಒಳಗಡೆ ಹೊದಿಸಿರಬೇಕು. ಅದರ ಮೇಲೆ ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು.</verse>
				<verse number="12">ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ, ಅಂದರೆ ಒಂದೊಂದು ಕಡೆಗಳಲ್ಲಿ ಎರಡೆರಡು ಬಳೆಗಳನ್ನು ಇಡಬೇಕು.</verse>
				<verse number="13">ಆ ಮಂಜೂಷವನ್ನು ಹೊರುವುದಕ್ಕಾಗಿ ಜಾಲೀಮರದ ದೊಣ್ಣೆಗಳನ್ನು ಮಾಡಿಸಿ, ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ,</verse>
				<verse number="14">ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.</verse>
				<verse number="15">ಆ ದೊಣ್ಣೆಗಳನ್ನು ಮಂಜೂಷದ ಬಳೆಗಳಿಂದ ತೆಗೆಯದೆ ಅವುಗಳಲ್ಲಿಯೇ ಇಟ್ಟಿರಬೇಕು.</verse>
				<verse number="16">ಆ ಮಂಜೂಷದೊಳಗೆ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.</verse>
				<verse number="17">“ಇದೂ ಅಲ್ಲದೆ, ಅಪ್ಪಟ ಬಂಗಾರದ ಒಂದು ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದ ಹಾಗು ಒಂದುವರೆ ಮೊಳ ಅಗಲದ್ದಾಗಿರಬೇಕು.</verse>
				<verse number="18">ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ನಕಾಸಿ ಕೆಲಸದಿಂದ ಮಾಡಿಸಬೇಕು.</verse>
				<verse number="19">ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿಸಿ ಕೃಪಾಸನಕ್ಕೆ ಜೋಡಿಸಬೇಕು.</verse>
				<verse number="20">ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಕೃಪಾಸನವನ್ನು ರೆಕ್ಕೆಗಳಿಂದ ಮುಚ್ಚುವಂತೆಯೂ ಇರಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿರಬೇಕು.</verse>
				<verse number="21">ಆ ಕೃಪಾಸನವನ್ನು ಮಂಜೂಷದ ಮೇಲಿಡಬೇಕು. ನಾನು ನಿನಗೆ ಕೊಡುವ ಅಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇಡಬೇಕು.</verse>
				<verse number="22">ಅಲ್ಲಿಯೇ ನಾನು ನಿಮಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಅಜ್ಞಾಶಾಸನಗಳನ್ನಿಟ್ಟಿರುವ ಮಂಜೂಷದ ಮೇಲಿನ ಎರಡು ಕೆರೂಬಿಗಳ ನಡುವೆಯೇ ನಾನಿದ್ದು ನಿನ್ನ ಸಂಗಡ ಮಾತಾಡುವೆನು. ನೀನು ಇಸ್ರಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲ ವಿಷಯಗಳನ್ನು ತಿಳಿಸುವೆನು.</verse>
				<verse number="23">“ಜಾಲೀ ಮರದಿಂದ ಒಂದು ಮೇಜನ್ನು ಮಾಡಿಸು. ಅದು ಎರಡು ಮೊಳ ಉದ್ದ ಒಂದು ಮೊಳ ಅಗಲ ಹಾಗು ಒಂದುವರೆ ಮೊಳ ಎತ್ತರವಾಗಿರಲಿ.</verse>
				<verse number="24">ಅದಕ್ಕೆ ಅಪ್ಪಟ ಬಂಗಾರದ ತಗಡುಗಳನ್ನು ಹೊದಿಸಿ ಸುತ್ತಲೂ ತೋರಣ ಕಟ್ಟಿಸಬೇಕು.</verse>
				<verse number="25">ಮೇಜಿನ ಸುತ್ತಲು ಅಂಗೈ ಅಗಲದ ಅಡ್ಡಪಟ್ಟಿಯನ್ನು ಮಾಡಿಸಿ ಅದಕ್ಕೂ ಚಿನ್ನದ ತೋರಣ ಕಟ್ಟಿಸಬೇಕು.</verse>
				<verse number="26">ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಹಾಕಿಸಬೇಕು.</verse>
				<verse number="27">ಆ ಬಳೆಗಳು ಅಡ್ಡಪಟ್ಟಿಗೆ ಹತ್ತಿಕೊಂಡಿರಬೇಕು. ಮೇಜನ್ನು ಎತ್ತುವುದಕ್ಕಾಗಿ ದೊಣ್ಣೆಗಳನ್ನು ಅವುಗಳಲ್ಲಿ ಸೇರಿಸಬೇಕು.</verse>
				<verse number="28">ಆ ದೊಣ್ಣೆಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು. ಇವುಗಳಿಂದಲೇ ಆ ಮೇಜನ್ನು ಎತ್ತಬೇಕು.</verse>
				<verse number="29">ಮೇಜಿನ ಮೇಲಿಡಬೇಕಾದ ತಟ್ಟೆಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು, ಪಾನಾರ್ಪಣೆಗೆ ಬೇಕಾದ ಬಟ್ಟಲುಗಳನ್ನು ಅಪ್ಪಟ ಬಂಗಾರದಿಂದಲೇ ಮಾಡಿಸಬೇಕು.</verse>
				<verse number="30">ಸಮ್ಮುಖದಲ್ಲಿ ರೊಟ್ಟಿಗಳನ್ನು ಯಾವಾಗಲೂ ಆ ಮೇಜಿನ ಮೇಲೆ ನನ್ನ ಮುಂದೆ ಇಟ್ಟಿರಬೇಕು.</verse>
				<verse number="31">“ಅಪ್ಪಟ ಬಂಗಾರದಿಂದ ಒಂದು ದೀಪವೃಕ್ಷವನ್ನು ಮಾಡಿಸಬೇಕು. ಅದರ ಬುಡವನ್ನು ಹಾಗು ಕಾಂಡವನ್ನು ನಕಾಸಿ ಕೆಲಸದಿಂದ ಮಾಡಿಸಬೇಕು. ಆ ದೀಪವೃಕ್ಷವೆಲ್ಲಾ ಅಖಂಡವಾಗಿರಬೇಕು. ಹೂಗಳಿಂದ, ಹೂಮೊಗ್ಗುಗಳಿಂದ ಕೂಡಿ ಅಲಂಕಾರವಾಗಿ ಕೆತ್ತಿರಬೇಕು.</verse>
				<verse number="32">ಆ ವೃಕ್ಷದ ಒಂದೊಂದು ಕಡೆಯಲ್ಲಿ ಮೂರು ಮೂರು ಕೊಂಬೆಗಳಂತೆ ಆರು ಕೊಂಬೆಗಳಿರಬೇಕು.</verse>
				<verse number="33">ಪ್ರತಿಯೊಂದು ಕೊಂಬೆಯಲ್ಲೂ ಬಾದಾಮಿ ಹೂವುಗಳಂತಿರುವ ಮೂರು ಮೂರು ಪುಷ್ಪಾಲಂಕಾರಗಳಿರಬೇಕು. ಒಂದೊಂದು ಅಲಂಕಾರಕ್ಕೆ ಒಂದು ಮೊಗ್ಗು ಹಾಗು ಒಂದು ಹೂ ಇರಬೇಕು. ಆರು ಕೊಂಬೆಗಳನ್ನೂ ಹಾಗೇ ಮಾಡಿಸಬೇಕು.</verse>
				<verse number="34">ದೀಪವೃಕ್ಷದ ಕಾಂಡದಲ್ಲಿ ಮೊಗ್ಗುಗಳೂ ಹೂಗಳೂ ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳು ಇರಬೇಕು.</verse>
				<verse number="35">ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗಿರಬೇಕು.</verse>
				<verse number="36">ಮೊಗ್ಗುಗಳನ್ನೂ ಕೊಂಬೆಗಳನ್ನೂ ಒಳಗೊಂಡ ದೀಪವೃಕ್ಷವನ್ನೆಲ್ಲಾ ಅಪ್ಪಟ ಬಂಗಾರವನ್ನು ಉಪಯೋಗಿಸಿ ನಕಾಸಿ ಕೆಲಸದಿಂದ ಮಾಡಿಸಬೇಕು.</verse>
				<verse number="37">ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳಲ್ಲಿ ದೀಪಹಚ್ಚಿದಾಗ ಅವುಗಳ ಬೆಳಕು ಮುಂಭಾಗದಲ್ಲಿ ಪ್ರಕಾಶಿಸುವುದು.</verse>
				<verse number="38">ದೀಪದ ಕುಡಿ ತೆಗೆಯುವ ಕತ್ತರಿಗಳನ್ನೂ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದ ಮಾಡಿಸಬೇಕು.</verse>
				<verse number="39">ಆ ದೀಪವೃಕ್ಷವನ್ನು ಅದರ ಎಲ್ಲ ಉಪಕರಣಗಳನ್ನು ಮಾಡಿಸಲು ಒಂದು ತಲಾಂತು ಅಪ್ಪಟ ಬಂಗಾರವನ್ನು ಉಪಯೋಗಿಸಬೇಕು.</verse>
				<verse number="40">ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯಂತೆಯೇ ಎಲ್ಲವನ್ನು ಎಚ್ಚರಿಕೆಯಿಂದ ಮಾಡಿಸಬೇಕು.</verse>
			</chapter>
			<chapter number="26">
				<verse number="1">“ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ತಾನು ಬಟ್ಟೆಗಳಿಂದ ಮಾಡಿಸಬೇಕು. ಅವು ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ ಊದ ಹಾಗು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮಾತ್ಕಾರವಾಗಿ ಕಸೂತಿ ಹಾಕಿಸಬೇಕು.</verse>
				<verse number="2">ಒಂದೊಂದು ತಾನು ಬಟ್ಟೆ ಇಪ್ಪತ್ತೆಂಟು ಮೊಳ ಉದ್ದ ಹಾಗು ನಾಲ್ಕು ಮೊಳ ಅಗಲವಾಗಿರಬೇಕು.</verse>
				<verse number="3">ಇಂತಹ ಐದೈದು ಬಟ್ಟೆಗಳನ್ನು ಒಂದೊಂದಾಗಿ ಜೋಡಿಸಬೇಕು.</verse>
				<verse number="4">ಆ ಎರಡು ಜೋಡನೆಗಳಲ್ಲಿ ಒಂದೊಂದರ ಕೊನೇ ಬಟ್ಟೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿಸಬೇಕು.</verse>
				<verse number="5">ಆ ಕುಣಿಕೆಗಳು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರುಬದರಾಗಿರಬೇಕು.</verse>
				<verse number="6">ಇದೂ ಅಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಿ ಆ ಬಟ್ಟೆಗಳನ್ನು ಒಂದಕ್ಕೊಂದು ಕೂಡಿಸಬೇಕು. ಹೀಗೆ ಒಂದೇ ಗುಡಾರವಾಗುವುದು.</verse>
				<verse number="7">ಈ ಗುಡಾರದ ಮೇಲೆ ಹೊರಿಸುವುದಕ್ಕಾಗಿ ಆಡು ಕೂದಲಿನ ಹನ್ನೊಂದು ತಾನು ಬಟ್ಟೆಗಳನ್ನು ಮಾಡಿಸಬೇಕು.</verse>
				<verse number="8">ಇಂತಹ ಒಂದೊಂದು ಬಟ್ಟೆ ಮೂವತ್ತು ಮೊಳ ಉದ್ದ ಹಾಗೂ ನಾಲ್ಕು ಮೊಳ ಅಗಲವಾಗಿರಬೇಕು. ಎಲ್ಲ ಬಟ್ಟೆಗಳು ಒಂದೇ ಅಳತೆಯಾಗಿರಬೇಕು.</verse>
				<verse number="9">ಐದು ಬಟ್ಟೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಬಟ್ಟೆಗಳನ್ನು ಒಂದಾಗಿ ಜೋಡಿಸಿ ಆರನೇಯ ಬಟ್ಟೆಯನ್ನು ಡೇರೆಯ ಮುಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು.</verse>
				<verse number="10">ಒಂದೊಂದು ಕೊನೇ ಬಟ್ಟೆಯ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿಸಬೇಕು.</verse>
				<verse number="11">ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿಸಿ ಒಂದೇ ಡೇರೆಯಾಗುವಂತೆ ಆ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಎಲ್ಲವನ್ನು ಕೂಡಿಸಬೇಕು.</verse>
				<verse number="12">ಹೊದಿಕೆಯ ಬಟ್ಟೆಗಳಲ್ಲಿ ಅರ್ಧ ಬಟ್ಟೆ ಹೆಚ್ಚಾಗಿರುತ್ತದೆ. ಆ ಹೆಚ್ಚಿನ ಭಾಗವು ಗುಡಾರದ ಹಿಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು.</verse>
				<verse number="13">ಹೊದಿಕೆಯ ಬಟ್ಟೆಗಳ ಉದ್ದದಲ್ಲಿ ಈ ಕಡೆ ಒಂದು ಮೊಳ ಆ ಕಡೆ ಒಂದು ಮೊಳ ಹೆಚ್ಚಾಗಿರುತ್ತದೆ. ಅವು ಒಳಗಿನ ಗುಡಾರವನ್ನು ಮುಚ್ಚುವಂತೆ ಈ ಕಡೆಯೂ ಆ ಕಡೆಯೂ ಇರಬೇಕು.</verse>
				<verse number="14">ಈ ಹೊದಿಕೆಗೆ ಹೊದಿಸುವುದಕ್ಕಾಗಿ ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನು ಹಾಗು ಕಡಲುಹಂದಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿಸಬೇಕು.</verse>
				<verse number="15">ಗುಡಾರಕ್ಕೆ ಬೇಕಾದ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿಸಬೇಕು.</verse>
				<verse number="16">ಪ್ರತಿಯೊಂದು ಚೌಕಟ್ಟು ಹತ್ತು ಮೊಳ ಉದ್ದ ಒಂದುವರೆ ಮೊಳ ಅಗಲವಿರಬೇಕು ಮತ್ತು</verse>
				<verse number="17">ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟು ಎರಡು ನಿಲವು ಪಟ್ಟಿಗಳುಳ್ಳದ್ದಾಗಿರಬೇಕು. ಗುಡಾರದ ಎಲ್ಲ ಚೌಕಟ್ಟುಗಳನ್ನು ಹಾಗೇ ಮಾಡಿಸಬೇಕು.</verse>
				<verse number="18">ಅದರ ದಕ್ಷಿಣ ದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ನಿಲ್ಲಿಸಬೇಕು.</verse>
				<verse number="19">ನಾಲ್ವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಿಸಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಡಬೇಕು. ಒಂದೊಂದು ಚೌಕಟ್ಟಿನಲ್ಲಿರುವ ಎರಡು ಪಟ್ಟಿಗಳಿಗೆ ಒಂದೊಂದು ಗದ್ದಿಗೇ ಕಲ್ಲು ಇರಬೇಕು.</verse>
				<verse number="20">ಹಾಗೆಯೇ ಗುಡಾರದ ಉತ್ತರ ದಿಕ್ಕಿನಲ್ಲಿಯೂ ಇಪ್ಪತ್ತು ಚೌಕಟ್ಟುಗಳೂ ಮತ್ತು</verse>
				<verse number="21">ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಗದ್ದಿಗೇ ಕಲ್ಲುಗಳು ಇರಬೇಕು.</verse>
				<verse number="22">ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ಆರು ಚೌಕಟ್ಟುಗಳನ್ನು ಮಾಡಿಸಬೇಕು.</verse>
				<verse number="23">ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿಸಬೇಕು.</verse>
				<verse number="24">ಅವು ಬುಡದಿಂದ ತುದಿಯವರೆಗೂ, ಅಂದರೆ ಮೊದಲನೆಯ ಬಳೆಯ ತನಕ ಜೋಡಿಸಿರಬೇಕು. ಹಾಗೆ ಎರಡು ಮೂಲೆಗಳಿಗೂ ಮಾಡಿಸಬೇಕು.</verse>
				<verse number="25">ಹೀಗೆ ಹಿಂಭಾಗದಲ್ಲಿ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೇ ಕಲ್ಲುಗಳೂ, ಅಂತೂ ಹದಿನಾರು ಗದ್ದಿಗೇ ಕಲ್ಲುಗಳೂ ಇರುವುವು.</verse>
				<verse number="26">ಜಾಲೀಮರದಿಂದ ಅಗುಳಿಗಳನ್ನು ಮಾಡಿಸಬೇಕು. ಗುಡಾರದ ಎರಡು ಕಡೆಗಳ ಚೌಕಟ್ಟುಗಳಿಗೂ</verse>
				<verse number="27">ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿಸಬೇಕು.</verse>
				<verse number="28">ಚೌಕಟ್ಟುಗಳ ನಟ್ಟನಡುವೆಯಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ಮುಟ್ಟಬೇಕು.</verse>
				<verse number="29">ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿಸಬೇಕು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಬೇಕು.</verse>
				<verse number="30">ನಾನು ಬೆಟ್ಟದಲ್ಲಿ ನಿನಗೆ ತೋರಿಸಿಕೊಟ್ಟ ರೀತಿಯಲ್ಲೇ ಗುಡಾರವನ್ನು ನಿಲ್ಲಿಸಬೇಕು.</verse>
				<verse number="31">ಹುರಿನಾರಿನ ಬಟ್ಟೆಯಲ್ಲಿ ನೀಲಿ, ಧೂಮ್ರ, ರಕ್ತವರ್ಣಗಳುಳ್ಳ ದಾರದಿಂದ ಕೆರೂಬಿಗಳನ್ನು ಕಲಾತ್ಮಕವಾಗಿ ಕಸೂತಿಹಾಕಿ ಒಂದು ತೆರೆಯ ಚಿತ್ರವನ್ನು ಮಾಡಿಸಬೇಕು.</verse>
				<verse number="32">ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ, ಚಿನ್ನದ ತಗಡುಗಳನ್ನು ಹೊದಿಸಿ, ನಾಲ್ಕು ಬೆಳ್ಳಿಯ ಗದ್ದಿಗೇ ಕಲ್ಲುಗಳ ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ತೆರೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು.</verse>
				<verse number="33">ಆ ತೆರೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ತೆರೆಯು ಪವಿತ್ರಸ್ಥಾನವೆಂಬುದನ್ನೂ ಮಹಾಪವಿತ್ರಸ್ಥಾನವೆಂಬುದನ್ನೂ ಬೇರೆ ಬೇರೆ ಮಾಡುವುದು.</verse>
				<verse number="34">ಮಹಾಪವಿತ್ರಸ್ಥಾನದಲ್ಲಿ ಆಜ್ಞಾಶಾಸನಗಳ ಮಂಜೂಷದ ಮೇಲೆ ಕೃಪಾಸನವನ್ನು ತಂದಿಡಬೇಕು.</verse>
				<verse number="35">ತೆರೆಯ ಹೊರಗಡೆಯಲ್ಲಿ ಮೇಜನ್ನೂ ಮೇಜಿನ ಎದುರಾಗಿ ಗುಡಾರದ ದಕ್ಷಿಣ ದಿಕ್ಕಿನಲ್ಲಿ ದೀಪವೃಕ್ಷವನ್ನೂ ಇಡಬೇಕು; ಮೇಜು ಉತ್ತರ ಕಡೆಯಲ್ಲಿರಬೇಕು.</verse>
				<verse number="36">ಡೇರೆಯ ಬಾಗಲಿಗೆ ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ, ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದ ವಿಚಿತ್ರವಾಗಿ ಕಸೂತಿಹಾಕಿ ತೆರೆಯನ್ನು ಮಾಡಿಸಬೇಕು.</verse>
				<verse number="37">ತೆರೆ ತೂಗಿಸುವುದಕ್ಕಾಗಿ ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳ ಕೊಂಡಿಗಳನ್ನು ಚಿನ್ನದಿಂದ ಮಾಡಿಸಿ ಅವುಗಳಿಗೋಸ್ಕರ ಐದು ತಾಮ್ರದ ಗದ್ದಿಗೇ ಕಲ್ಲುಗಳನ್ನು ಎರಕಹೊಯ್ಯಿಸಬೇಕು.</verse>
			</chapter>
			<chapter number="27">
				<verse number="1">“ಬಲಿಪೀಠವನ್ನು ಜಾಲೀಮರದಿಂದ ಮಾಡಿಸಬೇಕು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಹಾಗು ಮೂರು ಮೊಳ ಎತ್ತರವಿರಬೇಕು.</verse>
				<verse number="2">ಅದನ್ನು ಚಚ್ಚೌಕವಾಗಿ ಮಾಡಿಸಬೇಕು. ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಅವು ಬಲಿಪೀಠದ ಅಂಗವಾಗಿರಬೇಕು. ಆ ಪೀಠಕ್ಕೆ ತಾಮ್ರದ ತಗಡುಗಳನ್ನು ಹೊದಿಸಬೇಕು.</verse>
				<verse number="3">ಅದರಲ್ಲಿರುವ ಬೂದಿಯನ್ನು ತೆಗೆಯುವುದಕ್ಕಾಗಿ ಬಟ್ಟಲುಗಳನ್ನು ಮಾಡಿಸಬೇಕು. ಸಲಿಕೆಗಳನ್ನು, ಬೋಗುಣಿಗಳನ್ನು, ಮುಳ್ಳುಗಳನ್ನು ಹಾಗು ಅಗ್ಗಿಷ್ಟಿಕೆಗಳನ್ನು ಕೂಡ ಮಾಡಿಸಬೇಕು. ಈ ಉಪಕರಣಗಳೆಲ್ಲಾ ತಾಮ್ರದವುಗಳಾಗಿರಬೇಕು.</verse>
				<verse number="4">ಪೀಠಕ್ಕೆ ಹೆಣಿಗೆ ಕೆಲಸದಿಂದ ತಾಮ್ರದ ಜಾಳಿಗೆಯನ್ನು ಮಾಡಿಸಬೇಕು. ಆ ಜಾಳಿಗೆಯ ನಾಲ್ಕು ಮೂಲೆಗಳಲ್ಲಿ ತಾಮ್ರದ ಬಳೆಗಳನ್ನು ಹಾಕಿಸಬೇಕು.</verse>
				<verse number="5">ಆ ಜಾಳಿಗೆಯು ಪೀಠದ ಸುತ್ತಲಿರುವ ಕಟ್ಟಿಗೆಯ ಕಟ್ಟೆಯ ಕೆಳಗೆ ಇದ್ದು, ಪೀಠದ ಬುಡದಿಂದ ನಡುವಿನ ತನಕ ಇರುವಂತೆ ಹಾಕಿಸಬೇಕು.</verse>
				<verse number="6">ಪೀಠವನ್ನು ಹೊರುವ ಗುದಿಗೆಗಳನ್ನು ಜಾಲೀಮರದಿಂದ ಮಾಡಿಸಿ ತಾಮ್ರದ ತಗಡುಗಳನ್ನು ಹೊದಿಸಬೇಕು.</verse>
				<verse number="7">ಆ ಗುದಿಗೆಗಳನ್ನು ಆ ಬಳೆಗಳಿಗೆ ಸೇರಿಸಿದಾಗ ಅವು ಬಲಿಪೀಠವನ್ನು ಹೊರುವುದಕ್ಕಾಗಿ ಅದರ ಎರಡು ಕಡೆಗಳಲ್ಲಿ ಇರುವುವು.</verse>
				<verse number="8">ಆ ಬಲಿಪೀಠವನ್ನು ಹಲಗೆಗಳಿಂದ ಪೆಟ್ಟಿಗೆಯಂತೆ ಮಾಡಿಸಬೇಕು. ನಾನು ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಿಸಬೇಕು.</verse>
				<verse number="9">“ಗುಡಾರಕ್ಕೆ ಅಂಗಳವನ್ನು ಏರ್ಪಡಿಸಬೇಕು. ಆ ಅಂಗಳದ ದಕ್ಷಿಣ ಕಡೆಯಲ್ಲಿ ತೆರೆಗಳು ಇರಬೇಕು. ಹುರಿನಾರಿನ ಬಟ್ಟೆಯಿಂದ ತಯಾರಿಸಿದ ಆ ತೆರೆಗಳು ನೂರು ಮೊಳ ಉದ್ದವಿರಬೇಕು.</verse>
				<verse number="10">ಆ ಕಡೆಯಲ್ಲಿ ಇಪ್ಪತ್ತು ಕಂಬಗಳು ಹಾಗು ಅವುಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇ ಕಲ್ಲುಗಳೂ ಇರಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳೂ ಇರಬೇಕು.</verse>
				<verse number="11">ಅದೇ ರೀತಿ ಉತ್ತರ ಕಡೆಯಲ್ಲೂ ನೂರು ಮೊಳ ಉದ್ದದ ತೆರೆಗಳು, ಇಪ್ಪತ್ತು ಕಂಬಗಳು ಹಾಗು ಇಪ್ಪತ್ತು ತಾಮ್ರದ ಗದ್ದಿಗೇ ಕಲ್ಲುಗಳೂ ಇರಬೇಕು. ಕಂಬಗಳ ಕೊಂಡಿಗಳು ಮತ್ತು ಕಟ್ಟುಗಳು ಬೆಳ್ಳಿಯಿಂದ ಮಾಡಿದವಾಗಿರಬೇಕು.</verse>
				<verse number="12">ಪಶ್ಚಿಮ ಕಡೆಯಲ್ಲಿ ಅಂಗಳದ ಅಗಲಕ್ಕೆ ಐವತ್ತು ಮೊಳ ಉದ್ದವಾದ ತೆರೆಗಳು, ಹತ್ತು ಕಂಬಗಳು ಹಾಗು ಹತ್ತು ಗದ್ದಿಗೇ ಕಲ್ಲುಗಳು ಇರಬೇಕು.</verse>
				<verse number="13">ಪೂರ್ವ ದಿಕ್ಕಿನಲ್ಲೂ ಅಂಗಳದ ಅಗಲವು ಐವತ್ತು ಮೊಳವಿರಬೇಕು.</verse>
				<verse number="14">ಅಲ್ಲೆ ಬಾಗಿಲಿನ ಎರಡು ಕಡೆಗಳಲ್ಲೂ ಹದಿನೈದು ಮೊಳ ಉದ್ದವಾದ ತೆರೆಗಳೂ ಅವುಗಳಿಗೆ ಮೂರು ಮೂರು ಕಂಬಗಳೂ ಮೂರು ಮೂರು ಗದ್ದಿಗೇ ಕಲ್ಲುಗಳೂ ಇರಬೇಕು.</verse>
				<verse number="15"></verse>
				<verse number="16">ಅಂಗಳದ ಬಾಗಿಲಲ್ಲೇ ಇಪ್ಪತ್ತು ಮೊಳದ ಪರದೆ ಇರಬೇಕು. ಅದನ್ನು ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿ ಕೆಲಸದವರ ಕೈಯಿಂದ ಮಾಡಿಸಬೇಕು. ಬಾಗಿಲಿಗೆ ನಾಲ್ಕು ಕಂಬಗಳು ಮತ್ತು ನಾಲ್ಕು ಗದ್ದಿಗೇ ಕಲ್ಲುಗಳು ಇರಬೇಕು.</verse>
				<verse number="17">ಅಂಗಳದ ಸುತ್ತಲಿರುವ ಎಲ್ಲ ಕಂಬಗಳಿಗೂ ಬೆಳ್ಳಿಯ ಕಟ್ಟುಗಳು, ಬೆಳ್ಳಿಯ ಕೊಂಡಿಗಳು ಹಾಗು ತಾಮ್ರದ ಗದ್ದುಗೇ ಕಲ್ಲುಗಳು ಇರಬೇಕು.</verse>
				<verse number="18">ಅಂಗಳವು ಮೂರು ಮೊಳ ಉದ್ದ ಹಾಗು ಐವತ್ತು ಮೊಳ ಅಗಲವಿರಬೇಕು. ಅದಕ್ಕೆ ಅದರ ಸುತ್ತಲಿರುವ ಪರದೆ ಹುರಿನಾರಿನ ಬಟ್ಟೆಯಿಂದ ಮಾಡಿದ್ದಾಗಿ ಐದು ಮೊಳ ಎತ್ತರವಿರಬೇಕು. ಅದಕ್ಕೆ ಸೇರಿದ ಗದ್ದಿಗೇ ಕಲ್ಲುಗಳು ತಾಮ್ರದವುಗಳಾಗಿರಬೇಕು.</verse>
				<verse number="19">ಗುಡಾರದ ಎಲ್ಲಾ ವಿಧ ಕೆಲಸಕ್ಕೆ ಬೇಕಾದ ಉಪಕರಣಗಳು, ಗುಡಾರದ ಹಾಗು ಅಂಗಳದ ಗೂಟಗಳು ತಾಮ್ರದವುಗಳಾಗಿರಬೇಕು.</verse>
				<verse number="20">“ಆ ದೀಪವು ಯಾವಾಗಲೂ ಉರಿಯುತ್ತಿರಬೇಕು. ಅದಕ್ಕೆ ಎಣ್ಣೇ ಮರದ ಕಾಯಿಗಳನ್ನು ಕುಟ್ಟಿ ನಿರ್ಮಲವಾದ ಎಣ್ಣೆಯನ್ನು ತೆಗೆದುಕೊಡಬೇಕೆಂದು ಇಸ್ರಯೇಲರಿಗೆ ಅಪ್ಪಣೆ ಮಾಡು.</verse>
				<verse number="21">ದೇವದರ್ಶನದ ಗುಡಾರದಲ್ಲಿ, ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಮುಂಜಾನೆಯವರೆಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವನ್ನು ಇಸ್ರಯೇಲರು ಮತ್ತು ಅವರ ಸಂತತಿಯವರು ತಲತಲಾಂತರದವರೆಗೂ ಅನುಸರಿಸಬೇಕು.</verse>
			</chapter>
			<chapter number="28">
				<verse number="1">:ನನಗೆ ಯಾಜಕಸೇವೆ ಮಾಡಲು ನೀನು ನಿನ್ನ ಅಣ್ಣ ಆರೋನನನ್ನು ಮತ್ತು ಅವನ ಮಕ್ಕಳಾದ ನಾದಾಬ್, ಅಬೀಹು, ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರನ್ನು ಇಸ್ರಯೇಲರ ಮಧ್ಯೆಯಿಂದ ನನ್ನ ಬಳಿಗೆ ಕರೆದುಕೊಂಡು ಬಾ.</verse>
				<verse number="2">ನಿನ್ನ ಅಣ್ಣ ಆರೋನನಿಗೆ ತಕ್ಕ ಗೌರವ ಹಾಗು ಶೋಭೆ ತರುವಂಥ ದೀಕ್ಷಾವಸ್ತ್ರಗಳನ್ನು ಮಾಡಿಸು.</verse>
				<verse number="3">ಯಾರಿಗೆ ನಾನು ಕಲಾಕುಶಲತೆಯನ್ನು ಪೂರ್ಣವಾಗಿ ಅನುಗ್ರಹಿಸಿದ್ದೇನೋ ಅಂಥವರೊಡನೆ ಚರ್ಚಿಸಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕ ಸೇವೆಗೆ ಪ್ರತಿಷ್ಠಿತನಾಗಲಿ.</verse>
				<verse number="4">ತಯಾರಿಸಬೇಕಾದ ವಸ್ತ್ರಗಳು ಇವು: ಎದೆಕವಚ, ಏಫೋದ್ ಕವಚ, ಮೇಲಂಗಿ, ಕಸೂತಿ ನಿಲುವಂಗಿ, ಗುರುಪೇಟ ಮತ್ತು ನಡುಕಟ್ಟು, ನಿನ್ನ ಅಣ್ಣ ಆರೋನನು ಮತ್ತು ಅವನ ಮಕ್ಕಳು ನನ್ನ ಯಾಜಕರಾಗಿ ಸೇವೆ ಮಾಡುವಂತೆ ಅವರಿಗೆ ಈ ದೀಕ್ಷಾವಸ್ತ್ರಗಳನ್ನು ಮಾಡಿಸು.</verse>
				<verse number="5">ಜನರು ಕಾಣಿಕೆಯಾಗಿ ಕೊಡುವ ಚಿನ್ನವನ್ನು, ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರವನ್ನು ಮತ್ತು ನಾರಿನಬಟ್ಟೆಯನ್ನು ಈ ವಸ್ತ್ರಗಳನ್ನು ತಯಾರಿಸಲು ಉಪಯೋಗಿಸು.</verse>
				<verse number="6">‘ಏಫೋದ್’ ಎಂಬ ಕವಚವನ್ನು ಹುರಿನಾರಿನ ಬಟ್ಟೆಯಿಂದ ಮಾಡಿಸು. ಚಿನ್ನದ ದಾರದಿಂದಲೂ ಹಾಗು ನೀಲಿ, ಊದ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದವರು ಅದನ್ನು ಅಲಂಕರಿಸಲಿ.</verse>
				<verse number="7">ಈ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳಿರಬೇಕು. ಅದಕ್ಕೆ ಎರಡು ಕೊನೆಗಳು ಜೋಡಿಸಲ್ಪಡಬೇಕು.</verse>
				<verse number="8">ಕವಚದ ಮೇಲಿರುವ ಕಸೂತಿ ಕೆಲಸದ ನಡುಕಟ್ಟು ಕವಚದ ಅಂಗವಾಗಿರಬೇಕು. ಅದರಂತೆಯೇ ಹುರಿನಾರಿನ ಬಟ್ಟೆಯಿಂದ ಮಾಡಿರಬೇಕು. ಚಿನ್ನದ ದಾರದಿಂದಲೂ ನೀಲಿ, ಊದ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಅಲಂಕೃತವಾಗಿರಬೇಕು.</verse>
				<verse number="9">ಎರಡು ಗೋಮೇಧಕ ರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸು.</verse>
				<verse number="10">ಒಂದು ರತ್ನದಲ್ಲಿ ಆರು ಹೆಸರುಗಳನ್ನು ಮತ್ತೊಂದು ರತ್ನದಲ್ಲಿ ಮಿಕ್ಕ ಆರು ಹೆಸರುಗಳನ್ನು ಅವರವರ ಜನನದ ಕ್ರಮಾನುಸಾರ ಕೆತ್ತಿಸು.</verse>
				<verse number="11">ಮುದ್ರಾ, ರತ್ನವನ್ನು ಕೆತ್ತುವಂತೆ, ಈ ಎರಡು ರತ್ನಗಳಲ್ಲಿ ಇಸ್ರಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಿ ಆ ರತ್ನಗಳನ್ನು ಕುಂದಣದಲ್ಲಿ ಕಟ್ಟಿಸಬೇಕು.</verse>
				<verse number="12">ಇಸ್ರಯೇಲರ ಜ್ಞಾಪಕಾರ್ಥವಾಗಿ ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಕವಚದ ಪಟ್ಟಿಗಳಲ್ಲಿ ಬಿಗಿಸಬೇಕು. ಆರೋನನು ಸರ್ವೇಶ್ವರನಾದ ನನ್ನ ಸನ್ನಿಧಿಗೆ ಭುಜಗಳ ಮೇಲೆ ಅವುಗಳನ್ನು ಧರಿಸಿಕೊಂಡು ಬರುವನು.</verse>
				<verse number="13">ಆ ರತ್ನಗಳನ್ನು ಖಚಿಸಿಡುವುದಕ್ಕೆ ಚಿನ್ನದ ಸರಿಗೆಯನ್ನು ಹೆಣೆದು ಗೂಡುಗಳನ್ನು ಮಾಡಿಸಬೇಕು.</verse>
				<verse number="14">ಅಲ್ಲದೇ ಹೆಣೆಗೇ ಕೆಲಸದಿಂದ ಹುರಿಗಳಂತಿರುವ ಎರಡು ಅಪ್ಪಟ ಬಂಗಾರದ ಸರಪಣಿಗಳನ್ನು ಮಾಡಿಸಿ ಆ ರತ್ನಗಳ ಗೂಡುಗಳಿಗೆ ಸಿಕ್ಕಿಸಬೇಕು.</verse>
				<verse number="15">“ದೈವನಿರ್ಣಯದ ಚೀಲವುಳ್ಳ ಎದೆಫಲಕವನ್ನು ಕಸೂತಿ ಕೆಲಸದಿಂದ ಮಾಡಿಸು. ಅದನ್ನು ಏಫೋದ್ ಕವಚದ ಕೆಲಸದಂತೆಯೇ ಚಿನ್ನದ ದಾರದಿಂದಲೂ, ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಹುರಿನಾರಿನ ಬಟ್ಟೆಯಿಂದ ಮಾಡಿಸು.</verse>
				<verse number="16">ಅದು ಒಂದು ಗೇಣು ಉದ್ದ, ಒಂದು ಗೇಣು ಅಗಲ ಹಾಗು ಎರಡು ಪದರುಳ್ಳದ್ದಾಗಿ ಚಚ್ಚೌಕವಾಗಿರಲಿ.</verse>
				<verse number="17">ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ಜವೆಯ ಕಲ್ಲುಗಳಲ್ಲಿ ರತ್ನಗಳನ್ನು ಸೇರಿಸಬೇಕು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಹಾಗು ಸ್ಫಟಿಕಗಳನ್ನು;</verse>
				<verse number="18">ಎರಡನೆಯ ಸಾಲಿನಲ್ಲಿ ಕೆಂಪರಲು ಹಾಗು ನೀಲಿ ಪಚ್ಚೆಗಳನ್ನು;</verse>
				<verse number="19">ಮೂರನೆಯ ಸಾಲಿನಲ್ಲಿ ಸುವರ್ಣ ರತ್ನ, ಗೋಮೇಧಕ ಹಾಗು ಧೂಮ್ರಮಣಿಗಳನ್ನು; ಮತ್ತು</verse>
				<verse number="20">ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ ಹಾಗು ವೈಢೂರ್ಯಗಳನ್ನು ಚಿನ್ನದ ಜವೆಯ ಕಲ್ಲುಗಳಲ್ಲಿ ಸೇರಿಸಬೇಕು.</verse>
				<verse number="21">ಇಸ್ರಯೇಲರ ಕುಲಗಳ ಸಂಖ್ಯಾನುಸಾರ ಹನ್ನೆರಡು ರತ್ನಗಳಿರಬೇಕು. ಮುದ್ರಾ ರತ್ನದಲ್ಲಿ ಕೆತ್ತುವಂತೆ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.</verse>
				<verse number="22">ಅದೂ ಅಲ್ಲದೆ ಆ ಎದೆಫಲಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಅಪ್ಪಟ ಬಂಗಾರದ ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿಸಿಡಬೇಕು.</verse>
				<verse number="23">ಎರಡು ಚಿನ್ನದ ಉಂಗುರಗಳನ್ನು ಮಾಡಿಸಿ ಪದಕದ ಎರಡು ಮೂಲೆಗಳಿಗೆ ಹಚ್ಚಬೇಕು.</verse>
				<verse number="24">ಆ ಎರಡು ಸರಪಣಿಗಳನ್ನು ಪದಕದ ಮೂಲೆಗಳಲ್ಲಿರುವ ಉಂಗುರಗಳಿಗೆ ಸಿಕ್ಕಿಸಬೇಕು.</verse>
				<verse number="25">ಆ ಸರಪಣಿಗಳ ಕೊನೆಗಳನ್ನು ಏಫೋದ್ ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಜವೆಗಳ ಮುಂಭಾಗಕ್ಕೆ ಸಿಕ್ಕಿಸಬೇಕು.</verse>
				<verse number="26">ಅದಲ್ಲದೆ ಎರಡು ಚಿನ್ನದ ಉಂಗುರಗಳನ್ನು ಮಾಡಿಸಿ ಆ ಎದೆಫಲಕದ ಒಳಗೂ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲೇ ಇಡಿಸಬೇಕು.</verse>
				<verse number="27">ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿಸಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಆ ಕಸೂತಿ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಬೇಕು.</verse>
				<verse number="28">ಎದೆಫಲಕವು ಕಸೂತಿ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆ ಹಾಗು ಕವಚದಿಂದ ಕಳಚಿಬೀಳದಂತೆ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿದಾರದಿಂದ ಕಟ್ಟಿಸಬೇಕು.</verse>
				<verse number="29">“ದೈವನಿರ್ಣಯದ ಚೀಲವುಳ್ಳ ಆ ಫಲಕದ ಮೇಲೆ ಇಸ್ರಯೇಲರ ಕುಲಗಳ ಹೆಸರುಗಳು ಬರೆದಿರುವುದರಿಂದ ಆರೋನನು ಅದನ್ನು ತನ್ನ ಎದೆಯ ಮೇಲೆ ಧರಿಸಿಕೊಂಡು ಪವಿತ್ರಸ್ಥಾನದೊಳಗೆ ಬರುವಾಗಲೆಲ್ಲಾ ಆ ಹೆಸರುಗಳನ್ನು ಸರ್ವೇಶ್ವರನಾದ ನನ್ನ ನೆನಪಿಗೆ ಸತತವಾಗಿ ತರುವನು.</verse>
				<verse number="30">ದೈವನಿರ್ಣಯವನ್ನು ತಿಳಿಸುವ ಊರಿಮ್ ಹಾಗು ತುಮ್ಮೀಮ್ ಎಂಬ ದಾಳಗಳನ್ನು ಆ ಫಲಕದ ಚೀಲದಲ್ಲಿ ಇಡಬೇಕು. ಆರೋನನು ಸರ್ವೇಶ್ವರನಾದ ನನ್ನ ಸನ್ನಿಧಿಗೆ ಬರುವಾಗ ಅವು ಅವನ ಎದೆಯ ಮೇಲೆ ಇರುವುವು. ಇಸ್ರಯೇಲರು ಕೈಗೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಯಾವಾಗಲು ಧರಿಸಿಕೊಂಡಿರುವನು.</verse>
				<verse number="31">“ಪ್ರಧಾನ ಯಾಜಕನು ಎಫೋದ್ ಕವಚದ ಸಂಗಡ ತೊಟ್ಟುಕೊಳ್ಳಬೇಕಾದ ಮೇಲಂಗಿಯನ್ನು ನೀಲಿ ಬಣ್ಣದ ಬಟ್ಟೆಯಿಂದ ಮಾಡಿಸು.</verse>
				<verse number="32">ತಲೆದೂರಿಸುವುದಕ್ಕೆ ಇರುವ ಸಂದಿನ ಸುತ್ತಲೂ ನೇಯಿಗೆ ಕಸೂತಿಯನ್ನು ಹಾಕಿಸಬೇಕು.</verse>
				<verse number="33">ಮೇಲಂಗಿಯ ಅಂಚಿನ ಸುತ್ತಲೂ ನೀಲಿ, ಊದ ಹಾಗು ಕಡುಗೆಂಪು ರಕ್ತವರ್ಣಗಳುಳ್ಳ ದಾರದಿಂದ ದಾಳಿಂಬೆ ಹಣ್ಣಿನಂತೆ ಚೆಂಡುಗಳನ್ನೂ ಅವುಗಳ ನಡುವೆ ಗೆಜ್ಜೆಗಳನ್ನೂ ತಗಲಿಸಬೇಕು.</verse>
				<verse number="34">ಚಿನ್ನದ ಗೆಜ್ಜೆಯು ಹಾಗು ದಾಳಿಂಬೆಯಂತಿರುವ ಚಂಡು ಒಂದಾದ ಮೇಲೆ ಒಂದು ಆ ಮೇಲಂಗಿಯ ಅಂಚಿನ ಸುತ್ತಲು ಇರಬೇಕು.</verse>
				<verse number="35">ಆರೋನನು ಸೇವೆ ಸಲ್ಲಿಸುವ ಸಮಯದಲ್ಲಿ ಅದನ್ನು ಧರಿಸಿಕೊಳ್ಳಬೇಕು. ಅವನು ಪವಿತ್ರಸ್ಥಾನದೊಳಗೆ ಸರ್ವೇಶ್ವರನಾದ ನನ್ನ ಸನ್ನಿಧಿಗೆ ಬರುವಾಗ ಹಾಗು ಹೋಗುವಾಗ ಆ ಗೆಜ್ಜೆಗಳ ಶಬ್ದ ಕೇಳಿಸಬೇಕು. ಇಲ್ಲದಿದ್ದರೆ ಅವನು ಸಾಯುವನು.</verse>
				<verse number="36">“ಚೊಕ್ಕ ಬಂಗಾರದ ಪಟ್ಟಿಯೊಂದನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರ ಮೇಲೆ ‘ಸರ್ವೇಶ್ವರನಿಗೆ ಮೀಸಲು’ ಎಂಬ ಲಿಪಿಯನ್ನು ಕೆತ್ತಿಸಬೇಕು.</verse>
				<verse number="37">ಅದನ್ನು ಪೇಟಕ್ಕೆ ಬಿಗಿಯುವುದಕ್ಕಾಗಿ ನೀಲಿದಾರವನ್ನು ಅದಕ್ಕೆ ಕಟ್ಟಿಸಬೇಕು. ಅದು ಪೇಟದ ಮುಂಭಾಗದಲ್ಲಿ ಇರಬೇಕು.</verse>
				<verse number="38">ಇಸ್ರಯೇಲರನ್ನು ಪರಿಶುದ್ಧಗೊಳಿಸುವ ಪವಿತ್ರವಸ್ತುಗಳಲ್ಲಿ ಹಾಗು ಅವರು ಕಾಣಿಕೆಯಾಗಿ ಸಮರ್ಪಿಸುವ ಸಮಸ್ತವಸ್ತುಗಳಲ್ಲಿ ದೋಷವೇನಾದರು ಇದ್ದರೆ ಆರೋನನು ಆ ಪಟ್ಟಿಯನ್ನು ತಲೆಯ ಮೇಲೆ ಧರಿಸಿ ಆ ದೋಷವನ್ನು ತಾನೇ ವಹಿಸಿಕೊಳ್ಳುತ್ತಾನೆ. ಆದ್ದರಿಂದ ಅವರು ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಅಂಗೀಕೃತರಾಗುತ್ತಾರೆ.</verse>
				<verse number="39">“ಆರೋನನು ಧರಿಸಬೇಕಾದ ನಿಲುವಂಗಿಯನ್ನು ನಯವಾದ ನಾರಿನಿಂದ ನೇಯಿಸು. ಅವನ ಪೇಟವನ್ನೂ ಅಂತೆಯೇ ನಯವಾದ ನಾರಿನಿಂದ ಮಾಡಿಸು. ಅವನ ನಡುಕಟ್ಟು ಕಸೂತಿ ಕೆಲಸದಿಂದ ಅಲಂಕಾರವಾಗಿರಬೇಕು.</verse>
				<verse number="40">“ಆರೋನನ ಮಕ್ಕಳಿಗೆ ತಕ್ಕ ಗೌರವ ಹಾಗು ಶೋಭೆ ಸಿಗುವಂತೆ ನಿಲುವಂಗಿಗಳನ್ನೂ ನಡುಕಟ್ಟುಗಳನ್ನೂ ಹಾಗು ಪೇಟಗಳನ್ನು ಮಾಡಿಸು.</verse>
				<verse number="41">ಈ ಬಗೆಯ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ ಅವನ ಮಕ್ಕಳಿಗೂ ತೊಡಿಸಿ, ಅವರನ್ನು ಅಭಿಷೇಕಿಸಿ, ಉದ್ಯೋಗಕ್ಕೆ ಸೇರಿಸಿ ಪ್ರತಿಷ್ಠಿಸು. ಆಗ ಅವರು ನನಗೆ ಯಾಜಕರಾಗಿರುವರು.</verse>
				<verse number="42">ಅದೂ ಅಲ್ಲದೆ ಅವರ ಗುಪ್ತಾಂಗ ಕಾಣಿಸದಂತೆ ಸೊಂಟದಿಂದ ತೊಡೆಯ ತನಕ ನಾರಿನ ಚಡ್ಡಿಗಳನ್ನು ಮಾಡಿಸು.</verse>
				<verse number="43">ಆರೋನನು ಮತ್ತು ಅವನ ಮಕ್ಕಳು ದೇವದರ್ಶನದ ಗುಡಾರದೊಳಗೆ ಬರುವಾಗ ಹಾಗು ಪವಿತ್ರಸ್ಥಾನದಲ್ಲಿ ಸೇವೆ ಮಾಡಲು ಬಲಿಪೀಠದ ಹತ್ತಿರ ಬರುವಾಗ ಇವುಗಳನ್ನು ಹಾಕಿಕೊಂಡಿರಲಿ. ಇಲ್ಲವಾದರೆ ಅವರು ಆ ಅಪರಾಧದ ನಿಮಿತ್ತ ಸಾಯುವರು. ಆರೋನನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮ.</verse>
			</chapter>
			<chapter number="29">
				<verse number="1">“ಆರೋನನು ಮತ್ತು ಅವನ ಮಕ್ಕಳು ನನಗೆ ಯಾಜಕರಾಗಿ ಸೇವೆ ಸಲ್ಲಿಸುವಂತೆ ನೀನು ಅವರನ್ನು ಹೀಗೆ ಪ್ರತಿಷ್ಠಿಸು: ಕಳಂಕರಹಿತವಾದ ಒಂದು ಹೋರಿಕರುವನ್ನು ಮತ್ತು ಎರಡು ಟಗರುಗಳನ್ನು ತೆಗೆದುಕೊ.</verse>
				<verse number="2">ಹುಳಿಯಿಲ್ಲದ ರೊಟ್ಟಿಗಳನ್ನು ಎಣ್ಣೆಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನು ಹಾಗು ಎಣ್ಣೆ ಹೊಯಿದು ಹುಳಿಯಿಲ್ಲದ ಕಡುಬುಗಳನ್ನು ಗೋದಿ ಹಿಟ್ಟಿನಿಂದ ಮಾಡಿಸಿ ಒಂದೇ ಪುಟ್ಟಿಯಲ್ಲಿ ತುಂಬಿಸಿಕೊ.</verse>
				<verse number="3">ಆಮೇಲೆ ಆ ಪುಟ್ಟಿಯನ್ನು, ಆ ಹೋರಿಯನ್ನು ಹಾಗು ಟಗರುಗಳನ್ನು ತಂದಿಡು.</verse>
				<verse number="4">ಬಳಿಕ ಆರೋನನನ್ನೂ ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿಗೆ ಕರೆದುಕೊಂಡು ಬಂದು ನೀರಿನಲ್ಲಿ ಸ್ನಾನಮಾಡಿಸು.</verse>
				<verse number="5">ತರುವಾಯ ಆರೋನನಿಗೆ ಆ ವಸ್ತ್ರಗಳನ್ನು ಅಂದರೆ, ನಿಲುವಂಗಿಯನ್ನು, ಕವಚದೊಳಗೆ ತೊಟ್ಟುಕೊಳ್ಳಬೇಕಾದ ನಿಲುವಂಗಿಯನ್ನು, ಎಫೋದ್ ಕವಚವನ್ನು, ಎದೆಕವಚವನ್ನು ತೊಡಿಸಿ, ಕವಚದ ಕಸೂತಿ ನಡುಕಟ್ಟನ್ನು ಕಟ್ಟು.</verse>
				<verse number="6">ಅವನ ತಲೆಗೆ ಪೇಟವನ್ನು ಹಾಕಿಸಿ ಪೇಟದ ಮೇಲೆ ಪವಿತ್ರ ಪಟ್ಟಿಯನ್ನು ಕಟ್ಟಿಸು;</verse>
				<verse number="7">ಅಭಿಷೇಕತೈಲವನ್ನು ಅವನ ತಲೆಯ ಮೇಲೆ ಅಭ್ಯಂಜನ ಮಾಡಿ ಅವನನ್ನು ಅಭಿಷೇಕಿಸು.</verse>
				<verse number="8">ಅನಂತರ ಅವನ ಮಕ್ಕಳನ್ನು ಹತ್ತಿರಕ್ಕೆ ಕರೆದು ಅವರಿಗೆ ನಿಲುವಂಗಿಗಳನ್ನು ತೊಡಿಸು, ನಡುಕಟ್ಟುಗಳನ್ನು ಕಟ್ಟಿಸಿ ಪೇಟಗಳನ್ನು ಸುತ್ತಿಸು.</verse>
				<verse number="9">ಹೀಗೆ ಆರೋನನನ್ನೂ ಅವನ ಮಕ್ಕಳನ್ನೂ ಯಾಜಕ ಸೇವೆಗೆ ಸೇರಿಸು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತ ನಿಯಮವಾಗಿ ಪ್ರಾಪ್ತಿಸುವುದು.</verse>
				<verse number="10">ತರುವಾಯ ನೀನು ಆ ಹೋರಿಯನ್ನು ದೇವದರ್ಶನದ ಗುಡಾರದ ಎದುರಿಗೆ ತರಿಸಿ ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ಕೈಗಳನ್ನಿಟ್ಟ ನಂತರ</verse>
				<verse number="11">ಅದನ್ನು ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು.</verse>
				<verse number="12">ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲ ಬಲಿಪೀಠದ ಬುಡಕ್ಕೆ ಸುರಿಯಬೇಕು.</verse>
				<verse number="13">ಅದರ ವಪೆಯನ್ನು, ಕಾಳಿಜದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಹಾಗು ಅವುಗಳ ಮೇಲಿರುವ ಕೊಬ್ಬನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಹೋಮ ಮಾಡಬೇಕು.</verse>
				<verse number="14">ಹೋರಿಯ ಮಾಂಸವನ್ನು, ಚರ್ಮವನ್ನು ಹಾಗು ಕಲ್ಮಷವನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಟ್ಟುಬಿಡಬೇಕು. ಏಕೆಂದರೆ ಇದು ಪಾಪಪರಿಹಾರಕ ಬಲಿದಾನ.</verse>
				<verse number="15">ಇದಾದ ಬಳಿಕ ಆ ಟಗರುಗಳಲ್ಲಿ ಒಂದನ್ನು ತೆಗೆದುಕೊ. ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟ ನಂತರ</verse>
				<verse number="16">ಅದನ್ನು ವಧಿಸಿ ಅದರ ರಕ್ತವನ್ನು ಬಲಿಪೀಠದ ನಾಲ್ಕು ಕಡೆಗಳಿಗೆ ಸುರಿ.</verse>
				<verse number="17">ಆಮೇಲೆ ಆ ಟಗರನ್ನು ತುಂಡುತುಂಡಾಗಿ ಕಡಿದು ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆಸಿ ಅವುಗಳನ್ನೂ ಆ ತುಂಡುಗಳನ್ನೂ ಹಾಗು ತಲೆಯನ್ನೂ ಒಟ್ಟಿಗೆ ಇಟ್ಟು</verse>
				<verse number="18">ಅದನ್ನೆಲ್ಲಾ ಬಲಿಪೀಠದ ಮೇಲೆ ಸರ್ವೇಶ್ವರನಾದ ನನಗೆ ದಹನಬಲಿಯಾಗಿ ಸಮರ್ಪಿಸು. ಇದು ನನಗೆ ಪ್ರಿಯವಾದ ಸುಗಂಧ.</verse>
				<verse number="19">ಅನಂತರ ಎರಡನೆಯ ಟಗರನ್ನು ತೆಗೆದುಕೊಂಡು ಆರೋನನೂ ಅವನ ಮಕ್ಕಳೂ ಅದರ ಮೇಲೆ ತಮ್ಮ ಕೈಗಳನ್ನು ಇಟ್ಟ ನಂತರ ಅದನ್ನು ವಧಿಸು.</verse>
				<verse number="20">ಅದರ ರಕ್ತದಲ್ಲಿ ಸ್ವಲ್ಪವನ್ನು ಆರೋನನ ಮತ್ತು ಅವನ ಮಕ್ಕಳ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಸೋಂಕಿಸಿ ಮಿಕ್ಕ ರಕ್ತವನ್ನು ಬಲಿಪೀಠದ ನಾಲ್ಕು ಕಡೆಗಳಿಗೂ ಸುರಿ.</verse>
				<verse number="21">ಅದಲ್ಲದೆ ಬಲಿಪೀಠದ ಮೇಲಿರುವ ರಕ್ತದಲ್ಲಿಯೂ ಅಭಿಷೇಕ ತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮಕಿಸು. ಹೀಗೆ ಅವನೂ ಅವನ ಮಕ್ಕಳು ಅವನ ವಸ್ತ್ರಗಳ ಸಹಿತವಾಗಿ ಪ್ರತಿಷ್ಠಾಪಿತರಾಗುವರು.</verse>
				<verse number="22">ಪಟ್ಟಾಭಿಷೇಕಕ್ಕಾಗಿ ಸಮರ್ಪಿತವಾದ ಆ ಟಗರನ್ನೆಲ್ಲ, ಅಂದರೆ ಬಾಲದ ಕೊಬ್ಬನ್ನು, ವಪೆಯನ್ನು, ಕಾಳಿಜದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು, ಅವುಗಳ ಮೇಲಿರುವ ಕೊಬ್ಬನ್ನು,</verse>
				<verse number="23">ಬಲತೊಡೆಯನ್ನು ಮತ್ತು ಸರ್ವೇಶ್ವರನಾದ ನನಗೆದುರಾಗಿ ಪುಟ್ಟಿಯಲ್ಲಿ ಇಟ್ಟಿರುವ ಹುಳಿಯಿಲ್ಲದ ಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆಮಿಶ್ರವಾದ ಒಂದು ಹೋಳಿಗೆಯನ್ನು ಹಾಗು ಒಂದು ಕಡುಬನ್ನು ತೆಗೆದುಕೊ.</verse>
				<verse number="24">ಅವುಗಳನ್ನೆಲ್ಲ ಆರೋನನ ಮತ್ತು ಅವನ ಮಕ್ಕಳ ಕೈಗೆ ಕೊಟ್ಟು ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಕಾಣಿಕೆಯಾಗಿ ಆರತಿ ಮಾಡಿಸು.</verse>
				<verse number="25">ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಬಲಿಪೀಠದ ಮೇಲೆ ದಹನಬಲಿಯ ಸಂಗಡ ಸರ್ವೇಶ್ವರನಾದ ನನಗೆ ಆಹುತಿ ಕೊಡು. ಇದು ನನಗೆ ಪ್ರಿಯವಾದ ಸುಗಂಧ ಆಹಾರ ದಹನಬಲಿ.</verse>
				<verse number="26">“ಆರೋನನ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಿದ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಅದನ್ನು ಕೂಡ ಕಾಣಿಕೆಯಾಗಿ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಆರತಿ ಮಾಡಿಸು. ಅದು ನಿನಗೇ ಸಲ್ಲತಕ್ಕ ಪಾಲು.</verse>
				<verse number="27">ಆರೋನನಿಗೂ ಅವನ ಮಕ್ಕಳಿಗೂ ಯಾಜಕದೀಕ್ಷೆಯನ್ನು ಕೊಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ಕಾಣಿಕೆಯಾಗಿ ಆರತಿ ಮಾಡಿಸಿದ ಎದೆಯ ಭಾಗವನ್ನು ಮತ್ತು ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ಅದರ ತೊಡೆಯನ್ನು ದೇವರದೆಂದು ಭಾವಿಸಬೇಕು.</verse>
				<verse number="28">ಶಾಶ್ವತ ನಿಯಮವಾಗಿ ಇಸ್ರಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು, ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟವು. ಇಸ್ರಯೇಲರು ಸಮಾಧಾನದ ಬಲಿದಾನಕ್ಕಾಗಿ ಪ್ರಾಣಿಗಳನ್ನು ವಧಿಸಿ ಸರ್ವೇಶ್ವರನಾದ ನನಗೆ ಕಾಣಿಕೆಯನ್ನು ಅರ್ಪಿಸುವಾಗಲೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು.</verse>
				<verse number="29">“ಆರೋನನ ಯಾಜಕ ದೀಕ್ಷಾವಸ್ತ್ರಗಳನ್ನು ಅವನ ತರುವಾಯ ಅವನ ವಂಶಸ್ಥರಿಗೂ ಉಪಯೋಗವಾಗುವಂತೆ ಇಡಬೇಕು. ಅವರೂ ಯಾಜಕಾಭಿಷಿಕ್ತರಾಗಿ ಮಹಾಯಾಜಕ ಸೇವೆಯನ್ನು ಕೈಗೊಂಡಾಗ ಅವುಗಳನ್ನು ಧರಿಸಿಕೊಳ್ಳಬೇಕು,</verse>
				<verse number="30">ಅವನ ಮಕ್ಕಳಲ್ಲಿ ಅವನಿಗೆ ಪ್ರತಿಯಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡೆಸುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದ ದಿನದಿಂದ ಏಳು ದಿವಸಗಳವರೆಗೆ ಆ ವಸ್ತ್ರಗಳನ್ನು ತೊಟ್ಟುಕೊಂಡಿರಬೇಕು.</verse>
				<verse number="31">ಆರೋನನ ಯಾಜಕಾಭಿಷೇಕಕ್ಕಾಗಿ ಸಮರ್ಪಿಸಿದ ಟಗರಿನ ಮಾಂಸವನ್ನು ದೇವದರ್ಶನದ ಗುಡಾರದ ಪ್ರಾಕಾರದಲ್ಲಿ ಬೇಯಿಸಬೇಕು.</verse>
				<verse number="32">ಆರೋನನು ಮತ್ತು ಅವನ ಮಕ್ಕಳು ಆ ಟಗರಿನ ಮಾಂಸವನ್ನು ಹಾಗು ಪುಟ್ಟಿಯಲ್ಲಿರುವ ರೊಟ್ಟಿಯನ್ನು ದೇವದರ್ಶನದ ಗುಡಾರದ ಬಾಗಿಲೊಳಗೆ ಊಟಮಾಡಬೇಕು.</verse>
				<verse number="33">ಅವರನ್ನು ಯಾಜಕ ಪದವಿಗೆ ಸೇರಿಸುವುದಕ್ಕೂ ದೇವರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳನ್ನು ಪಾಪಪರಿಹಾರಕ್ಕಾಗಿ ಸಮರ್ಪಿಸಲಾದುವೋ ಅವುಗಳನ್ನು ಅವರೇ ಭೋಜನ ಮಾಡಬೇಕು. ಇತರರು ಅವುಗಳನ್ನು ತಿನ್ನಕೂಡದು. ಏಕೆಂದರೆ ಅವು ಮೀಸಲಾದುವು.</verse>
				<verse number="34">ಯಾಜಕಾಭಿಷೇಕಕ್ಕೆ ಸಂಬಂಧಪಟ್ಟ ಮಾಂಸದಲ್ಲಾಗಲಿ, ರೊಟ್ಟಿಯಲ್ಲಾಗಲಿ ಏನಾದರೂ ಮರುದಿನದ ಉದಯದವರೆಗೆ ಉಳಿದರೆ ಅದನ್ನು ಸುಟ್ಟುಬಿಡಬೇಕು. ಅದು ದೇವರ ವಸ್ತುವಾದುದರಿಂದ ಯಾರೂ ತಿನ್ನಕೂಡದು.</verse>
				<verse number="35">ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲಿ ಏಳು ದಿವಸದ ಆಚರಣೆಯನ್ನು ನಡೆಸಿ ಆರೋನ ಮತ್ತು ಅವನ ಮಕ್ಕಳನ್ನು ಯಾಜಕ ಸೇವೆಗೆ ಅಭಿಷೇಕಿಸು.</verse>
				<verse number="36">ಪ್ರತಿದಿನದಲ್ಲೂ ಪಾಪಪರಿಹಾರಕ್ಕಾಗಿ ಒಂದು ಹೋರಿಯನ್ನು ಬಲಿದಾನ ಮಾಡು. ಅದೂ ಅಲ್ಲದೆ ಬಲಿಪೀಠವನ್ನು ಶುದ್ಧಮಾಡುವುದಕ್ಕಾಗಿ ಅದರ ಮೇಲೆ ಪಾಪಪರಿಹಾರಕ ಬಲಿಯನ್ನು ಸಮರ್ಪಿಸಿ, ಆ ಪೀಠವನ್ನು ದೇವರ ಸೇವೆಗೋಸ್ಕರ ಅಭಿಷೇಕಿಸು.</verse>
				<verse number="37">ಹೀಗೆ ಏಳು ದಿನಗಳವರೆಗೆ ಬಲಿಪೀಠದ ನಿಮಿತ್ತ ಪಾಪಪರಿಹಾರಕ ಆಚಾರವನ್ನು ನಡೆಸಿ ಅದನ್ನು ಪ್ರತಿಷ್ಠಾಪಿಸು. ಬಲಿಪೀಠವು ಅತಿಶುದ್ಧವಾಗಿರಬೇಕು. ಅದನ್ನು ಸೋಕಿದ್ದೆಲ್ಲವು ಪರಿಶುದ್ಧವಾಗುವುದು.</verse>
				<verse number="38">ಬಲಿಪೀಠದ ಮೇಲೆ ಅನುದಿನವೂ ಸಮರ್ಪಿಸಬೇಕಾದುವುಗಳು ಇವು: ಒಂದು ವರ್ಷದ ಎರಡು ಕುರಿಗಳನ್ನು ದಿನಂಪ್ರತಿ ಬಲಿದಾನ ಮಾಡಬೇಕು.</verse>
				<verse number="39">ಅವುಗಳಲ್ಲಿ ಒಂದನ್ನು ಬೆಳಿಗ್ಗೆ ಮತ್ತೊಂದನ್ನು ಸಂಜೆ ಸಮರ್ಪಿಸಬೇಕು.</verse>
				<verse number="40">ಒಂದು ಲೀಟರು ಶ್ರೇಷ್ಠವಾದ ಓಲಿವ್ ಎಣ್ಣೆಯನ್ನು ಒಂದು ಕಿಲೋಗ್ರಾಂ ಗೋದಿಹಿಟ್ಟಿಗೆ ಬೆರೆಸಿ ಧಾನ್ಯಾರ್ಪಣೆಗಾಗಿ ಆ ಮೊದಲನೆಯ ಕುರಿಯ ಸಮೇತ ಹೋಮಮಾಡಬೇಕು.</verse>
				<verse number="41">ಸಂಜೆ ಎರಡನೆಯ ಕುರಿಯನ್ನು ಬಲಿದಾನ ಮಾಡುವಾಗ ಬೆಳಿಗ್ಗೆ ಮಾಡಿದಂತೆಯೇ ಅದರೊಂದಿಗೆ ಧಾನ್ಯವನ್ನೂ ಪಾನವನ್ನೂ ಸಮರ್ಪಿಸಬೇಕು. ಅದು ಸರ್ವೇಶ್ವರನಾದ ನನಗೆ ಪ್ರಿಯವಾದ ಸುಗಂಧ ದಹನಬಲಿಯಾಗಿರುವುದು.</verse>
				<verse number="42">ನೀವು ಮತ್ತು ನಿಮ್ಮ ಸಂತತಿಯವರು ಪ್ರತಿನಿತ್ಯವೂ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಈ ದಹನಬಲಿಯನ್ನು ಅರ್ಪಿಸಬೇಕು.</verse>
				<verse number="43">ಅಲ್ಲಿಯೇ ನಾನು ಇಸ್ರಯೇಲರಿಗೆ ದರ್ಶನವನ್ನು ಕೊಡುವೆನು. ಅಲ್ಲಿ ಕಾಣಿಸುವ ನನ್ನ ಪ್ರಭಾವದಿಂದ ಆ ಸ್ಥಳವು ಪರಿಶುದ್ಧವಾಗಿರುವುದು.</verse>
				<verse number="44">ನಾನು ದೇವದರ್ಶನದ ಗುಡಾರವನ್ನು ಮತ್ತು ಬಲಿಪೀಠವನ್ನು ಪರಿಶುದ್ಧ ಸ್ಥಳಗಳಾಗುವಂತೆ ಮಾಡುವೆನು. ಆರೋನನು ಮತ್ತು ಅವನ ಮಕ್ಕಳು ನನಗೆ ಯಾಜಕರಾಗುವಂತೆ ಪ್ರತಿಷ್ಠಿಸಿಕೊಳ್ಳುವೆನು.</verse>
				<verse number="45">ತಮ್ಮ ಮಧ್ಯೆ ವಾಸವಾಗುವುದಕ್ಕಾಗಿಯೇ ತಮ್ಮನ್ನು ಈಜಿಪ್ಟಿನಿಂದ ಹೊರಗೆ ಬರಮಾಡಿದ ತಮ್ಮ ದೇವರಾದ ಸರ್ವೇಶ್ವರನು ನಾನೇ ಎಂದು ಅವರು ಅರಿತುಕೊಳ್ಳುವರು. ಹೌದು, ನಾನೇ ಅವರ ದೇವರಾದ ಸರ್ವೇಶ್ವರ ಸ್ವಾಮಿ.</verse>
			</chapter>
			<chapter number="30">
				<verse number="1">“ಸುಗಂಧದ್ರವ್ಯಗಳಿಂದ ಧೂಪ ಹಾಕುವುದಕ್ಕಾಗಿ ಜಾಲೀಮರದ ಒಂದು ವೇದಿಕೆಯನ್ನು ಮಾಡಿಸು.</verse>
				<verse number="2">ಅದು ಒಂದು ಮೊಳ ಉದ್ದ ಹಾಗು ಒಂದು ಮೊಳ ಅಗಲವಾಗಿದ್ದು ಚಚ್ಚೌಕವಾಗಿರಲಿ. ಅದರ ಎತ್ತರ ಎರಡು ಮೊಳವಿರಲಿ. ಅದರ ಕೊಂಬುಗಳು ಅದರ ಅಂಗಾಂಗವಾಗಿರಲಿ.</verse>
				<verse number="3">ಅದರ ಮೇಲ್ಭಾಗಕ್ಕೂ, ನಾಲ್ಕು ಪಕ್ಕಗಳಿಗೂ ಹಾಗು ಕೊಂಬುಗಳಿಗೂ ಚೊಕ್ಕಬಂಗಾರದ ತಗಡುಗಳನ್ನು ಹೊದಿಸಬೇಕು. ಸುತ್ತಲು ಚಿನ್ನದ ತೋರಣ ಕಟ್ಟಿಸಬೇಕು.</verse>
				<verse number="4">ಅದರ ಕೆಳಗೆ ವೇದಿಕೆಯ ಎರಡು ಪಕ್ಕಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಮೂಲೆಗಳಲ್ಲಿಯೇ ಹಾಕಿಸಬೇಕು. ವೇದಿಕೆಯನ್ನು ಹೊರುವುದಕ್ಕೆ ಗುದಿಗೆಗಳನ್ನು ಅವುಗಳಲ್ಲಿ ಸೇರಿಸಬೇಕು.</verse>
				<verse number="5">ಆ ಗುದಿಗೆಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು.</verse>
				<verse number="6">ಆಜ್ಞಾಶಾಸನಗಳಿರುವ ಮಂಜೂಷದ ಮುಂದೆ ಇರುವ ತೆರೆಗೆ ಎದುರಾಗಿ ಅಂದರೆ ಆಜ್ಞಾಶಾಸನಗಳ ಮೇಲಿರುವಂಥ ಹಾಗು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇರಿಸಬೇಕು.</verse>
				<verse number="7">ಆರೋನನು ಪ್ರತಿನಿತ್ಯವು ಬೆಳಿಗ್ಗೆ ದೀಪಗಳನ್ನು ಸರಿಪಡಿಸುವಾಗ ಹಾಗು ಸಂಜೆದೀಪಗಳನ್ನು ಹೊತ್ತಿಸುವಾಗ ಆ ವೇದಿಕೆಯ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು.</verse>
				<verse number="8">ಹೀಗೆ ನಿಮ್ಮಿಂದ ಮತ್ತು ನಿಮ್ಮ ಸಂತತಿಯವರಿಂದ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಎಡೆಬಿಡದೆ ಧೂಪಾರ್ಪಣೆ ಇರಬೇಕು.</verse>
				<verse number="9">ಆ ವೇದಿಕೆಯ ಮೇಲೆ ಬೇರೆ ಯಾವ ಅಪವಿತ್ರ ಧೂಪವನ್ನೂ ಹಾಕಕೂಡದು. ಅದರ ಮೇಲೆ ದಹನಬಲಿಯನ್ನಾಗಲಿ, ಅನ್ನಪಾನ ದ್ರವ್ಯಗಳನ್ನಾಗಲಿ ಅರ್ಪಿಸಕೂಡದು.</verse>
				<verse number="10">ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೊಮ್ಮೆ ಪಾಪಪರಿಹಾರಕ ಯಜ್ಞಪಶುವಿನ ರಕ್ತವನ್ನು ಆ ವೇದಿಕೆಯ ಕೊಂಬುಗಳಿಗೆ ಹಚ್ಚಿ ಅದರ ವಿಷಯವಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಸರ್ವೇಶ್ವರನಾದ ನನಗೆ ಪರಮ ಪವಿತ್ರವಾದುದು.</verse>
				<verse number="11">ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದು ಹೇಳಿದರು:</verse>
				<verse number="12">“ನೀನು ಇಸ್ರಯೇಲರ ಜನಗಣತಿ ಮಾಡುವಾಗ ಲೆಕ್ಕಿಸಬೇಕಾದ ಪ್ರತಿಯೊಬ್ಬನು ತನ್ನ ತನ್ನ ಪ್ರಾಣಕ್ಕೆ ಈಡಾಗಿ ಸರ್ವೇಶ್ವರನಾದ ನನಗೆ ತೆರಿಗೆಯನ್ನು ಕೊಡಬೇಕು. ಆಗ ಅವರಿಗೆ ಯಾವ ವಿಪತ್ತು ಸಂಭವಿಸದು.</verse>
				<verse number="13">ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನು ನನಗೆ ಅರ್ಧ ಶೆಕೆಲ್‍ ನಾಣ್ಯದ ಮೇರೆಗೆ ತೆರಿಗೆ ಕಟ್ಟಬೇಕು. ದೇವರ ಸೇವೆಗೆ ನೇಮಕವಾದ ಇಪ್ಪತ್ತು ‘ಗೇರಾ’ ತೂಕದ ನಾಣ್ಯದ ಮೇರೆಗೆ ಅರ್ಧರ್ಧ ನಾಣ್ಯವನ್ನು ತೆರಿಗೆಯಾಗಿ ಕೊಡಬೇಕು.</verse>
				<verse number="14">ಜನಗಣತಿಯಲ್ಲಿ ಸೇರಿಸಲಾದ ಇಪ್ಪತ್ತು ವರ್ಷದ ಹಾಗು ಅದಕ್ಕೂ ಹೆಚ್ಚು ವಯಸ್ಸಿನವರು ಈ ತೆರಿಗೆಯನ್ನು ನನಗೆ ಕಟ್ಟಬೇಕು.</verse>
				<verse number="15">ಪ್ರಾಣರಕ್ಷಣೆಯ ಈ ತೆರಿಗೆಯನ್ನು ನನಗೆ ಕೊಡುವವರಲ್ಲಿ ಐಶ್ವರ್ಯವಂತರು ಅರ್ಧನಾಣ್ಯಕ್ಕಿಂತ ಹೆಚ್ಚು ಕೊಡಬಾರದು; ಬಡವರು ಕಮ್ಮಿ ಕೊಡಬಾರದು.</verse>
				<verse number="16">ಪ್ರಾಣರಕ್ಷಣೆಯ ಈ ಹಣವನ್ನು ನೀನು ಇಸ್ರಯೇಲರಿಂದ ಶೇಖರಿಸಿ ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸು. ಇಸ್ರಯೇಲರ ಪ್ರಾಣವನ್ನು ಉಳಿಸಬೇಕೆಂಬುದಾಗಿ ಈ ತೆರಿಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಜ್ಞಾಪಕಪಡಿಸುವುದು.”</verse>
				<verse number="17">ಸರ್ವೇಶ್ವರ ಮೋಶೆಗೆ ಮತ್ತೆ ಹೀಗೆಂದರು:</verse>
				<verse number="18">“ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನು ಕಟ್ಟಿಸು. ಅದನ್ನು ಇಡಲು ಒಂದು ತಾಮ್ರದ ಪೀಠವನ್ನು ಮಾಡಿಸು. ದೇವದರ್ಶನದ ಗುಡಾರಕ್ಕೂ ಬಲಿಪೀಠಕ್ಕೂ ನಡುವೆ ಅದನ್ನಿಟ್ಟು ಅದರಲ್ಲಿ ನೀರನ್ನು ತುಂಬಿಸಿಡಬೇಕು.</verse>
				<verse number="19">ಆರೋನನು ಮತ್ತು ಅವನ ಮಕ್ಕಳು ಅದರಿಂದ ಕೈಕಾಲುಗಳನ್ನು ತೊಳೆದುಕೊಳ್ಳಬೇಕು.</verse>
				<verse number="20">ಅವರು ದೇವದರ್ಶನದ ಗುಡಾರಕ್ಕೆ ಹೋಗುವಾಗಲೆಲ್ಲಾ ಆ ನೀರಿನಿಂದ ಕೈಕಾಲುಗಳನ್ನು ತೊಳೆದುಕೊಂಡು ಹೋಗಬೇಕು. ತೊಳೆಯದೆ ಹೋದರೆ ಸಾಯುವರು. ಹಾಗೆಯೇ ಅವರು ದೇವರ ಸೇವೆಗೈಯುವವರಾಗಿ ಸರ್ವೇಶ್ವರನಾದ ನನಗೆ ದಹನ ಬಲಿಯರ್ಪಿಸಲು ಬಲಿಪೀಠದ ಬಳಿಗೆ ಬರುವಾಗಲೂ ಕೈಕಾಲುಗಳನ್ನು ತೊಳೆದುಕೊಂಡು ಬರಬೇಕು.</verse>
				<verse number="21">ತೊಳೆದುಕೊಳ್ಳದೆ ಬಂದರೆ ಸಾಯುವರು. ಇದು ಅವನಿಗೂ ಅವನ ಸಂತತಿಯವರಿಗೂ ಶಾಶ್ವತವಾದ ನಿಯಮ.</verse>
				<verse number="22">ಇದೂ ಅಲ್ಲದೆ ಸರ್ವೇಶ್ವರ ಮೋಶೆಗೆ ಇಂತೆಂದರು:</verse>
				<verse number="23">“ಸುಗಂಧ ದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಆರು ಕಿಲೋಗ್ರಾಂ ಅಚ್ಚರಕ್ತಬೋಳ, ಮೂರು ಕಿಲೋಗ್ರಾಂ ಶ್ರೇಷ್ಠವಾದ ಲವಂಗಚಕ್ಕೆ, ಮೂರು ಕಿಲೋಗ್ರಾಂ ಸುಗಂಧವಾದ ಬಜೆ ಹಾಗು ಆರು ಕಿಲೋಗ್ರಾಂ ದಾಲ್ಚಿನ್ನಿಯನ್ನು ತೆಗೆದುಕೊಳ್ಳಬೇಕು.</verse>
				<verse number="24">ಅದಕ್ಕೆ ನಾಲ್ಕು ಲೀಟರು ಓಲಿವ್ ಎಣ್ಣೆಯನ್ನು ಕೂಡಿಸಬೇಕು.</verse>
				<verse number="25">ಬುಕ್ಕಿಟ್ಟುಗಾರರ ಪದ್ಧತಿಯ ಮೇರೆಗೆ ಇವುಗಳನ್ನು ಮಿಶ್ರಮಾಡಿ ದೇವರ ಸೇವೆಗಾಗಿ ಅಭಿಷೇಕ ತೈಲವನ್ನು ತಯಾರಿಸಬೇಕು.</verse>
				<verse number="26">ಅದರಿಂದ ದೇವದರ್ಶನದ ಗುಡಾರ, ಆಜ್ಞಾಶಾಸನಗಳ ಮಂಜೂಷ, ಮೇಜು, ಮೇಜಿನ ಉಪಕರಣಗಳು,</verse>
				<verse number="27">ದೀಪವೃಕ್ಷ, ದೀಪವೃಕ್ಷದ ಉಪಕರಣಗಳು, ಧೂಪವೇದಿಕೆ,</verse>
				<verse number="28">ಬಲಿಪೀಠ, ಬಲಿಪೀಠದ ಉಪಕರಣಗಳು, ನೀರಿನ ತೊಟ್ಟಿ ಹಾಗು ಅದರ ಪೀಠ ಇವುಗಳನ್ನೆಲ್ಲ ಅಭಿಷೇಕಿಸಬೇಕು.</verse>
				<verse number="29">ಅವು ಅತಿ ಪರಿಶುದ್ಧವಾಗುವಂತೆ ಪ್ರತಿಷ್ಠಿಸಬೇಕು. ಅವುಗಳಿಗೆ ಸೋಕಿದ್ದೆಲ್ಲವು ಪರಿಶುದ್ಧವಾಗುವುದು.</verse>
				<verse number="30">ಅಲ್ಲದೆ ಆರೋನನು ಅವನ ಮಕ್ಕಳೂ ನನಗೆ ಯಾಜಕರಾಗುವಂತೆ ಅವರನ್ನೂ ಅಭಿಷೇಕಿಸಿ ಪ್ರತಿಷ್ಠಿಸಬೇಕು.</verse>
				<verse number="31">ನೀನು ಇಸ್ರಯೇಲರಿಗೆ, ‘ನೀವು ಮತ್ತು ನಿಮ್ಮ ಸಂತತಿಯವರು ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಅಭಿಷೇಕ ತೈಲವೆಂದು ತಿಳಿದುಕೊಳ್ಳಬೇಕು.</verse>
				<verse number="32">ಮೈಗೆ ಹಚ್ಚಿಕೊಳ್ಳುವುದಕ್ಕೆ ಇದನ್ನು ಉಪಯೋಗಿಸಬಾರದು. ಈ ವಿಧಾನವನ್ನು ಅನುಸರಿಸಿ ಬೇರೆ ಕಾರ್ಯಕ್ಕಾಗಿ ತೈಲವನ್ನು ತಯಾರಿಸಲೇ ಕೂಡದು. ಇದು ದೇವರ ವಸ್ತು. ಇದು ಮೀಸಲೆಂದು ನೀವು ತಿಳಿದುಕೊಳ್ಳಬೇಕು.</verse>
				<verse number="33">ಇದರಂತೆ ತೈಲವನ್ನು ಮಾಡುವವನು ಹಾಗು ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು.</verse>
				<verse number="34">ಸರ್ವೇಶ್ವರ ಮೋಶೆಗೆ ಮತ್ತೆ ಆಜ್ಞಾಪಿಸಿದ್ದೇನೆಂದರೆ: “ನೀನು ಹಾಲುಮಡ್ಡಿ, ಗುಗ್ಗುಲ ಹಾಗು ಗಂಧದಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಮತ್ತು ಸ್ವಚ್ಚವಾದ ಧೂಪವನ್ನು ಸಮಭಾಗವಾಗಿ ತೆಗೆದುಕೊಂಡು ಸುವಾಸನೆಯುಳ್ಳ ಬುಕ್ಕಿಟ್ಟಾಗಿರುವಂತೆ</verse>
				<verse number="35">ಪರಿಮಳದ್ರವ್ಯಕಾರರು ಮಾಡುವಂತೆ ಕಲಸಿ, ಉಪ್ಪು ಹಾಕಿ, ದೇವರ ಸೇವೆಗೆ ಸ್ವಚ್ಚವಾದ ಧೂಪದ್ರವ್ಯವನ್ನು ಮಾಡಿಸಬೇಕು.</verse>
				<verse number="36">ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನ ಗುಡಾರದೊಳಗೆ ಆಜ್ಞಾಶಾಸನಗಳಿರುವ ಮಂಜೂಷದ ಎದುರಾಗಿ ನಾನು ನಿನಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು.</verse>
				<verse number="37">ನೀವು ಆ ಧೂಪದ್ರವ್ಯದ ವಿಧಾನದ ಮೇರೆಗೆ ನಿಮ್ಮ ಸ್ವಂತ ಉಪಯೋಗಕ್ಕೋಸ್ಕರ ಧೂಪದ್ರವ್ಯವನ್ನು ಮಾಡಿಸಲೇಬಾರದು. ಅದು ಸರ್ವೇಶ್ವರನಾದ ನನ್ನ ಸೇವೆಗೆ ಮಾತ್ರ ಉಪಯೋಗಿಸಬೇಕಾದ, ಮೀಸಲಾದ ಪದಾರ್ಥವೆಂದು ಭಾವಿಸಬೇಕು.</verse>
				<verse number="38">ಕೇವಲ ಸುವಾಸನೆಗಾಗಿ ಅಂಥದ್ದನ್ನು ಮಾಡಿಕೊಳ್ಳುವವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”</verse>
			</chapter>
			<chapter number="31">
				<verse number="1">ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದರು:</verse>
				<verse number="2">“ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನೆಂಬುವನನ್ನು ಗುರುತಿಸಿ ನಾನು ಆರಿಸಿಕೊಂಡಿದ್ದೇನೆ;</verse>
				<verse number="3">ಮತ್ತು ಅವನಿಗೆ ದೈವಾತ್ಮಶಕ್ತಿಯನ್ನು ಕೊಟ್ಟು, ತಕ್ಕಜ್ಞಾನ, ವಿವೇಕ ವಿವಿಧ ಶಿಲ್ಪಶಾಸ್ತ್ರ ಕುಶಲತೆಯನ್ನು ಅನುಗ್ರಹಿಸಿದ್ದೇನೆ.</verse>
				<verse number="4">ಅವನು ಸುಂದರವಾದ, ನಯನವಿರಾದ ಕೆಲಸಗಳನ್ನು ಕಲ್ಪಿಸುವನು; ಚಿನ್ನ, ಬೆಳ್ಳಿ, ತಾಮ್ರಗಳಿಂದ ಅವುಗಳನ್ನು ರೂಪಿಸುವನು;</verse>
				<verse number="5">ರತ್ನಗಳನ್ನು ಕೆತ್ತಿ ಮರದಲ್ಲಿ ವಿಚಿತ್ರವಾದ ಕೆತ್ತನೆ ಕೆಲಸವನ್ನು ಮಾಡುವನು; ಇವೇ ಮೊದಲಾದ ಸಮಸ್ತ ಶೃಂಗಾರ ಕೆಲಸವನ್ನು ಮಾಡುವನು.</verse>
				<verse number="6">ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗ ಒಹೋಲೀಯಾಬನನ್ನು ನೇಮಿಸಿದ್ದೇನೆ. ಇದು ಮಾತ್ರವಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಲು ಕಲಾನಿಪುಣರಿಗೆ ಬೇಕಾದ ಜ್ಞಾನವನ್ನು ಕೊಟ್ಟಿದ್ದೇನೆ.</verse>
				<verse number="7">ದೇವದರ್ಶನದ ಗುಡಾರ, ಆಜ್ಞಾಶಾಸನಗಳಿರುವ ಮಂಜೂಷ, ಅದರ ಮೇಲಿರುವ ಕೃಪಾಸನ, ಗುಡಾರದ ಎಲ್ಲ ಉಪಕರಣಗಳು;</verse>
				<verse number="8">ಮೇಜು, ಅದರ ಉಪಕರಣಗಳು, ಚೊಕ್ಕಬಂಗಾರದ ದೀಪವೃಕ್ಷ, ಅದರ ಉಪಕರಣಗಳು,</verse>
				<verse number="9">ಧೂಪವೇದಿಕೆ, ಬಲಿಪೀಠ, ಅದರ ಉಪಕರಣಗಳು,</verse>
				<verse number="10">ನೀರಿನ ತೊಟ್ಟಿ, ಅದರ ಪೀಠ, ಅಲಂಕಾರವಾದ ದೀಕ್ಷಾವಸ್ತ್ರಗಳು, ಅಂದರೆ ಮಹಾಯಾಜಕ ಆರೋನನಿಗೂ ಅವನ ಮಕ್ಕಳಿಗೂ ಬೇಕಾದ ಯಾಜಕ ವಸ್ತ್ರಗಳು,</verse>
				<verse number="11">ಪಟ್ಟಾಭಿಷೇಕ ತೈಲ, ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.</verse>
				<verse number="12">ಮೋಶೆ ಮುಖಾಂತರ ಸರ್ವೇಶ್ವರ ಇಸ್ರಯೇಲರಿಗೆ ಇತ್ತ ಆಜ್ಞೆ: “ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ತಪ್ಪದೆ ಆಚರಿಸಬೇಕು. ನಿಮ್ಮನ್ನು ದೇವಜನರನ್ನಾಗಿ ಮಾಡಿರುವ ಸರ್ವೇಶ್ವರನು ನಾನೇ ಎಂದು ನೀವು ತಿಳಿದುಕೊಳ್ಳುವಂತೆ ಇದೇ ನನಗೂ ನಿಮಗೂ ನಿಮ್ಮ ಸಂತತಿಯವರಿಗೂ ಇರುವ ಗುರುತು.</verse>
				<verse number="13"></verse>
				<verse number="14">ಆದಕಾರಣ ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಭಾವಿಸಿ ಆಚರಿಸಬೇಕು. ಅದನ್ನು ಅಪವಿತ್ರವೆಂದು ವರ್ತಿಸುವವನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ದುಡಿಯುವವನನ್ನು ತನ್ನ ಕುಲದಿಂದ ತೆಗೆದುಹಾಕಬೇಕು.</verse>
				<verse number="15">ಆರು ದಿನಗಳು ಕೆಲಸ ಮಾಡಬಹುದು. ಏಳನೆಯ ದಿನ ವಿಶ್ರಾಂತಿದಿನವಾದ ಸಬ್ಬತ್, ಸರ್ವೇಶ್ವರನಾದ ನನಗೆ ಪರಿಶುದ್ಧ ದಿನ. ಇಂಥ ಸಬ್ಬತ್ ದಿನದಲ್ಲಿ ದುಡಿಯುವವನಿಗೆ ಮರಣ ಶಿಕ್ಷೆಯಾಗಬೇಕು.</verse>
				<verse number="16">ಆದುದರಿಂದ ಇಸ್ರಯೇಲರು ಸಬ್ಬತ್ ದಿನವನ್ನು ಆಚರಿಸಬೇಕು. ಈ ಆಚರಣೆ ಅವರಿಗೂ ಅವರ ಪೀಳಿಗೆಗೂ ಶಾಶ್ವತವಾದ ಒಂದು ನಿಬಂಧನೆ.</verse>
				<verse number="17">ನನಗೂ ಇಸ್ರಯೇಲರಿಗೂ ನಡುವೆ ಇದೊಂದು ಸದಾಕಾಲದ ಗುರುತು. ಆರು ದಿನಗಳಲ್ಲಿ ಸರ್ವೇಶ್ವರನಾದ ನಾನು ಭೂಮ್ಯಾಕಾಶಗಳನ್ನು ಸೃಷ್ಟಿಮಾಡಿ ಏಳನೆಯ ದಿನದಲ್ಲಿ ದುಡಿಯದೆ ವಿಶ್ರಮಿಸಿಕೊಂಡೆನಲ್ಲವೆ?”</verse>
				<verse number="18">ಸರ್ವೇಶ್ವರ ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡುವುದನ್ನು ಮುಗಿಸಿದ ಮೇಲೆ ಅವನಿಗೆ ತಮ್ಮ ಕೈಯಿಂದ ಕೆತ್ತಲ್ಪಟ್ಟ ಶಿಲಾಶಾಸನಗಳಾದ ಎರಡು ಆಜ್ಞಾಶಾಸನಗಳನ್ನು ಕೊಟ್ಟರು.</verse>
			</chapter>
			<chapter number="32">
				<verse number="1">‘ಮೋಶೆ ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಯೇಲರು ನೋಡಿ, ಆರೋನನ ಬಳಿಗೆ ಕೂಡಿಬಂದರು. ಅವನಿಗೆ, “ಈಜಿಪ್ಟ್ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆ ಏನಾದನೋ ಗೊತ್ತಿಲ್ಲ. ಆದ್ದರಿಂದ ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗಲು ನಮಗೊಬ್ಬ ದೇವರನ್ನು ಮಾಡಿಸಿಕೊಡು,” ಎಂದು ಕೇಳಿದರು.</verse>
				<verse number="2">ಅದಕ್ಕೆ ಆರೋನನು, “ನಿಮ್ಮ ಹೆಂಡತಿಯರು, ಗಂಡುಮಕ್ಕಳು ಹಾಗು ಹೆಣ್ಣುಮಕ್ಕಳು ಹಾಕಿಕೊಂಡಿರುವ ಚಿನ್ನದ ಕಿವಿಯೋಲೆಗಳನ್ನು ಬಿಚ್ಚಿ ನನಗೆ ಒಪ್ಪಿಸಿರಿ,” ಎಂದನು.</verse>
				<verse number="3">ಜನರೆಲ್ಲರು ತಮ್ಮ ತಮ್ಮ ಕಿವಿಯೋಲೆಗಳನ್ನು ಬಿಚ್ಚಿ ಆರೋನನ ಬಳಿಗೆ ತಂದುಕೊಟ್ಟರು.</verse>
				<verse number="4">ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು, ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಿದನು. ಆಗ ಜನರು, “ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ದೇವರು ಇದೇ” ಎಂದು ಹೇಳಿದರು.</verse>
				<verse number="5">ಆರೋನನು ಇದನ್ನು ನೋಡಿ ಆ ಹೋರಿಕರುವಿನ ಮುಂದೆ ಒಂದು ಬಲಿಪೀಠವನ್ನು ಕಟ್ಟಿಸಿ, “ನಾಳೆ ಸರ್ವೇಶ್ವರ ಸ್ವಾಮಿಯ ಗೌರವಾರ್ಥ ಹಬ್ಬವನ್ನು ಆಚರಿಸಬೇಕು,” ಎಂದು ಪ್ರಕಟಿಸಿದನು.</verse>
				<verse number="6">ಅಂತೆಯೇ ಮರುದಿನ ಬೆಳಿಗ್ಗೆ ಜನರು ಎದ್ದು ದಹನಬಲಿಗಳನ್ನೂ ಸಮಾಧಾನಬಲಿಗಳನ್ನೂ ಸಮರ್ಪಿಸಿದರು. ಬಳಿಕ ತಿನ್ನಲೂ ಕುಡಿಯಲೂ ಕುಳಿತುಕೊಂಡರು. ಆಮೇಲೆ ಎದ್ದು ಕುಣಿದಾಡಿದರು.</verse>
				<verse number="7">ಇತ್ತ ಸರ್ವೇಶ್ವರ ಮೋಶೆಗೆ, “ನೀನು ಕೂಡಲೆ ಬೆಟ್ಟದಿಂದ ಇಳಿದುಹೋಗು, ಈಜಿಪ್ಟಿನಿಂದ ನೀನು ಕರೆದುತಂದ ನಿನ್ನ ಜನರು ಕೆಟ್ಟುಹೋದರು.</verse>
				<verse number="8">ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಇಷ್ಟು ಬೇಗನೆ ತೊರೆದುಬಿಟ್ಟು ತಮಗೇ ಲೋಹದ ಹೋರಿಕರುವನ್ನು ಮಾಡಿಸಿಕೊಂಡು, ಅದಕ್ಕೆ ಅಡ್ಡಬಿದ್ದು, ಬಲಿಗಳನ್ನರ್ಪಿಸಿ, ‘ಇಸ್ರಯೇಲರೇ ನೋಡಿ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರು’ ಎಂದು ಹೇಳಿಕೊಳ್ಳುತ್ತಿದ್ದಾರೆ.</verse>
				<verse number="9">ಈ ಜನರ ಸ್ವಭಾವ ನನಗೆ ಗೊತ್ತಿದೆ. ಇವರು ನನ್ನ ಆಜ್ಞೆಗೆ ಬಗ್ಗದ ಹಟಮಾರಿಗಳು.</verse>
				<verse number="10">ಆದಕಾರಣ ನೀನು ನನಗೆ ಅಡ್ಡಬರಬೇಡ. ನನ್ನ ಕೋಪಾಗ್ನಿ ಉರಿಯಲಿ. ಅವರನ್ನು ಸುಟ್ಟು ಭಸ್ಮ ಮಾಡುವೆನು. ಬಳಿಕ ನಿನ್ನಿಂದಲೇ ಬೇರೆ ಒಂದು ದೊಡ್ಡ ಜನಾಂಗ ಉದಯಿಸುವಂತೆ ಮಾಡುವೆನು,” ಎಂದು ಹೇಳಿದರು.</verse>
				<verse number="11">ಆಗ ಮೋಶೆ ತನ್ನ ದೇವರಾದ ಸರ್ವೇಶ್ವರನನ್ನು ಹೀಗೆಂದು ಬೇಡಿಕೊಂಡನು: “ಸ್ವಾಮಿ ಸರ್ವೇಶ್ವರಾ, ಮಹಾಶಕ್ತಿಯಿಂದಲೂ ಭುಜಬಲದಿಂದಲೂ ತಾವೇ ಈಜಿಪ್ಟಿನಿಂದ ಬಿಡಿಸಿದ ತಮ್ಮ ಪ್ರಜೆಯ ಮೇಲೆ ಕೋಪಾಗ್ನಿ ಕಾರಬಹುದೆ?</verse>
				<verse number="12">ಈಜಿಪ್ಟಿನವರು ತಮ್ಮ ವಿಷಯದಲ್ಲಿ, ‘ಸರ್ವೇಶ್ವರನು ಕೇಡುಮಾಡಬೇಕೆಂಬ ಉದ್ದೇಶದಿಂದಲೇ ಇಸ್ರಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದದ್ದು; ಅವರನ್ನು ಬೆಟ್ಟಗುಡ್ಡಗಳಲ್ಲಿ ಸಾಯಿಸಿ ಇಳೆಯಲ್ಲಿ ಉಳಿಯದಂತೆ ನಿರ್ಮೂಲ ಮಾಡಬೇಕೆಂದೇ ಅವರನ್ನು ಕರೆದುಕೊಂಡು ಹೋದದ್ದು ಎಂದು ಆಡಿಕೊಳ್ಳುವುದಕ್ಕೆ ಎಡೆಮಾಡಿಕೊಳ್ಳಬೇಕೆ? ತಾವು ಕೋಪಾಗ್ನಿಯನ್ನು ಬಿಟ್ಟು ತಮ್ಮ ಪ್ರಜೆಗೆ ಕೇಡುಮಾಡಬೇಕೆಂಬ ಮನಸ್ಸನ್ನು ಮಾರ್ಪಡಿಸಿಕೊಳ್ಳಿ.</verse>
				<verse number="13">ತಮ್ಮ ದಾಸರಾದ ಅಬ್ರಹಾಮ್, ಇಸಾಕ್ ಹಾಗು ಯಕೋಬರನ್ನು ನೆನಪಿಗೆ ತಂದುಕೊಳ್ಳಿ. ತಾವು ತಮ್ಮ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನು; ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನು; ಮತ್ತು ಅವರು ಈ ನಾಡನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರು’ ಎಂದು ತಾವು ಮಾತುಕೊಡಲಿಲ್ಲವೆ?” ಎಂದನು.</verse>
				<verse number="14">ಆಗ ಸರ್ವೇಶ್ವರ ತಮ್ಮ ಪ್ರಜೆಗಳಿಗೆ ಮಾಡುವೆನೆಂದು ಹೇಳಿದ ಕೇಡಿನ ಬಗ್ಗೆ ಮನಸ್ಸನ್ನು ಮಾರ್ಪಡಿಸಿಕೊಂಡರು.</verse>
				<verse number="15">ಮೋಶೆ ಆಜ್ಞಾಶಾಸನಗಳಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದ ಇಳಿದುಬಂದನು. ಆ ಹಲಗೆಗಳ ಎರಡು ಪಕ್ಕಗಳಲ್ಲೂ ಅಕ್ಷರಗಳು ಬರೆದಿದ್ದವು. ಇಕ್ಕಡೆಗಳಲ್ಲೂ ಬರಹವಿತ್ತು.</verse>
				<verse number="16">ಆ ಶಿಲಾಶಾಸನಗಳು ದೇವರ ಕೆಲಸವೇ ಆಗಿದ್ದವು. ಅವುಗಳಲ್ಲಿ ಬರೆದಿದ್ದು ದೇವರು ಕೆತ್ತಿದ ಅಕ್ಷರಗಳೇ ಆಗಿದ್ದವು.</verse>
				<verse number="17">ಇತ್ತ ಇಸ್ರಯೇಲರು ಕೇಕೆ ಹಾಕುತ್ತಾ ಕೂಗಾಡುತ್ತಿದ್ದುದನ್ನು ಯೆಹೋಶುವನು ಕೇಳಿ ಮೋಶೆಗೆ, “ಪಾಳೆಯದ ಕಡೆಯಿಂದ ಕಾಳಗದ ಧ್ವನಿ ಕೇಳಿಸುತ್ತಿದೆ,” ಎಂದು ಹೇಳಿದನು.</verse>
				<verse number="18">ಅದಕ್ಕೆ ಮೋಶೆ, ನನಗೆ ಕೇಳಿಸುವುದು ವಿಜಯ ಗೀತೆಯಲ್ಲ ಅದು ಅಪಜಯದ ಶೋಕ ಗೀತೆಯೂ ಅಲ್ಲ ಕೇಳಿಸುತ್ತಿದೆ ನನಗೆ ಸಂಗೀತ ಶ್ಲೋಕ.</verse>
				<verse number="19">ಮೋಶೆ ಪಾಳೆಯದ ಹತ್ತಿರಕ್ಕೆ ಬಂದು ಆ ಹೋರಿಕರುವನ್ನೂ ಜನರ ಕುಣಿದಾಟವನ್ನೂ ಕಂಡಾಗ ಕಡುಕೋಪಗೊಂಡನು. ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ಬುಡಕ್ಕೆ ಬಿಸಾಡಿ ಒಡೆದುಹಾಕಿಬಿಟ್ಟನು.</verse>
				<verse number="20">ಜನರು ಮಾಡಿಸಿಕೊಂಡಿದ್ದ ಆ ಹೋರಿಕರುವನ್ನು ತೆಗೆದು ಬೆಂಕಿಯಿಂದ ಸುಟ್ಟು, ಅರೆದು, ಪುಡಿಪುಡಿಮಾಡಿ, ನೀರಿನಲ್ಲಿ ಕಲಸಿ, ಇಸ್ರಯೇಲರಿಗೆ ಆ ನೀರನ್ನು ಕುಡಿಸಿದನು.</verse>
				<verse number="21">ಅಲ್ಲದೆ, ಆರೋನನನ್ನು ಉದ್ದೇಶಿಸಿ, “ನೀನು ಈ ಜನರಿಂದ ಮಹಾಪಾಪವನ್ನು ಮಾಡಿಸಿರುವೆ. ಹೀಗೆ ಮಾಡಿಸಲು ಇವರು ನಿನಗೇನು ಮಾಡಿದರು,” ಎಂದು ವಿಚಾರಿಸಿದನು. ಅದಕ್ಕೆ ಆರೋನನು,</verse>
				<verse number="22">ಒಡೆಯಾ, ಕೋಪಗೊಳ್ಳಬೇಡಿ. ಈ ಜನರು ಎಂಥ ಹಟಮಾರಿಗಳೆಂದು ನೀವೇ ಬಲ್ಲಿರಿ.</verse>
				<verse number="23">ಅವರು ನನ್ನ ಬಳಿಗೆ ಬಂದು, “ನಮ್ಮನ್ನು ಮುನ್ನಡೆಸಿಕೊಂಡು ಹೋಗಲು ನಮಗೊಬ್ಬ ದೇವರನ್ನು ಮಾಡಿಸಿಕೊಡು. ಈಜಿಪ್ಟಿನಿಂದ ನಮ್ಮನ್ನು ಕರೆದುಕೊಂಡು ಬಂದ ಮೋಶೆ ಏನಾದನೋ ಗೊತ್ತಿಲ್ಲ,” ಎಂದರು</verse>
				<verse number="24">ಅದಕ್ಕೆ ನಾನು, “ಯಾರಲ್ಲಿ ಚಿನ್ನದ ಒಡವೆ ಇದೆಯೋ ಅವರೆಲ್ಲರು ಅದನ್ನು ತೆಗೆದು ನನಗೆ ಕೊಡಬೇಕು,” ಎಂದೆ. ಅವರು ಹಾಗೆಯೇ ಕೊಟ್ಟರು. ನಾನು ಆ ಚಿನ್ನವನ್ನು ಬೆಂಕಿಯಲ್ಲಿ ಹಾಕಿದಾಗ ಈ ಹೋರಿಕರು ಹೊರಗೆ ಬಂತು,” ಎಂದನು.</verse>
				<verse number="25">ಇಸ್ರಯೇಲರು ಅಂಕೆಮೀರಿ ಇಷ್ಟಬಂದಂತೆ ನಡೆದುಕೊಳ್ಳಲು ಆರೋನನು ಬಿಟ್ಟುಬಿಟ್ಟಿದ್ದನು. ಈ ಕಾರಣ ಅವರು ವಿರೋಧಿಗಳ ಅಪಹಾಸ್ಯಕ್ಕೆ ಗುರಿಯಾಗಿದ್ದರು.</verse>
				<verse number="26">ಹೀಗೆ ಅವರು ಕ್ರಮವಿಲ್ಲದೆ ಸ್ವೇಚ್ಛಾಚಾರದಿಂದ ನಡೆದುಕೊಳ್ಳುವುದನ್ನು ಮೋಶೆ ನೋಡಿ, ಪಾಳೆಯದ ಹೊರಬಾಗಿಲಲ್ಲಿ ನಿಂತುಕೊಂಡು, “ಸರ್ವೇಶ್ವರನ ಪರವಾಗಿರುವವರೆಲ್ಲರು ನನ್ನ ಬಳಿಗೆ ಬರಬೇಕು,” ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರು ಅವನ ಬಳಿಗೆ ಕೂಡಿಬಂದರು.</verse>
				<verse number="27">ಮೋಶೆ ಅವರಿಗೆ, “ಇಸ್ರಯೇಲರ ದೇವರಾದ ಸರ್ವೇಶ್ವರನ ಅಪ್ಪಣೆ ಇದು: ನಿಮ್ಮಲ್ಲಿ ಪ್ರತಿಯೊಬ್ಬನು ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ನಡುವೆ ಒಂದು ಬಾಗಿಲಿನಿಂದ ಇನ್ನೊಂದು ಬಾಗಿಲಿನವರೆಗೆ ಹೋಗುತ್ತಾ ಬರುತ್ತಾ ಅಣ್ಣ-ತಮ್ಮ, ಗೆಳೆಯ-ನೆರೆಯವ ಎಂದು ಲಕ್ಷಿಸದೆ ಈ ಜನರನ್ನು ಸಂಹರಿಸಬೇಕು,” ಎಂದು ಹೇಳಿದನು.</verse>
				<verse number="28">ಲೇವಿಯ ಕುಲದವರು ಮೋಶೆಯ ಆಜ್ಞೆಯ ಮೇರೆಗೆ ಮಾಡಿದರು. ಆ ದಿನ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಹತರಾದರು.</verse>
				<verse number="29">ಮೋಶೆ ಆ ಲೇವಿಯರಿಗೆ, “ಈದಿನ ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ ನಿಮ್ಮನ್ನೇ ಸರ್ವೇಶ್ವರನ ಸೇವೆಗೆ ಪ್ರತಿಷ್ಠಾಪಿಸಿಕೊಂಡಿದ್ದೀರಿ. ಆದ್ದರಿಂದ ಅವರು ಈ ದಿನ ನಿಮ್ಮನ್ನು ಆಶೀರ್ವದಿಸಿರುವರು,” ಎಂದು ಹೇಳಿದನು.</verse>
				<verse number="30">ಮರುದಿನ ಮೋಶೆ ಜನರಿಗೆ, “ನೀವು ಮಹಾಪಾಪವನ್ನು ಮಾಡಿದಿರಿ. ಆದರೂ ನಾನು ಬೆಟ್ಟಹತ್ತಿ ಸರ್ವೇಶ್ವರನ ಸನ್ನಿಧಿಗೆ ಹೋಗುವೆನು. ಬಹುಶಃ ನೀವು ಮಾಡಿದ ಪಾಪಕೃತ್ಯಕ್ಕೆ ಕ್ಷಮಾಪಣೆ ನನ್ನ ಮುಖಾಂತರ ದೊರಕೀತು,” ಎಂದು ಹೇಳಿದನು.</verse>
				<verse number="31">ಅಂತೆಯೇ ಮೋಶೆ ಸರ್ವೇಶ್ವರನ ಬಳಿಗೆ ಮರಳಿ ಬಂದು, “ಅಕಟಕಟಾ, ಚಿನ್ನದಿಂದ ದೇವರನ್ನು ಮಾಡಿಕೊಂಡು ಈ ಜನರು ಮಹಾಪಾಪವನ್ನು ಕಟ್ಟಿಕೊಂಡಿದ್ದಾರೆ! ಆದರೂ ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಿಬಿಡಿ.</verse>
				<verse number="32">ಇಲ್ಲವಾದರೆ ನೀವು ಬರೆದಿರುವ (ಜೀವಿತರ) ಪಟ್ಟಿಯಿಂದ ನನ್ನ ಹೆಸರನ್ನು ಅಳಿಸಿಬಿಡಿಯೆಂದು ಕೇಳಿಕೊಳ್ಳುತ್ತೇನೆ,” ಎಂದು ಪ್ರಾರ್ಥಿಸಿದನು.</verse>
				<verse number="33">ಅದಕ್ಕೆ ಸರ್ವೇಶ್ವರ, “ಯಾರ್ಯಾರು ನನ್ನ ಮಾತನ್ನು ಮೀರಿ ಪಾಪಮಾಡಿದ್ದಾರೋ ಅವರ ಹೆಸರುಗಳನ್ನೇ ನನ್ನಲ್ಲಿರುವ ಪಟ್ಟಿಯಿಂದ ಅಳಿಸಿಬಿಡುತ್ತೇನೆ.</verse>
				<verse number="34">ನೀನಾದರೋ ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ನಾಡಿಗೆ ಈ ಜನರನ್ನು ನಡೆಸಿಕೊಂಡು ಹೋಗು. ನನ್ನ ದೂತನು ನಿನ್ನ ಮುಂದುಗಡೆ ನಡೆಯುವನು. ಆದರೂ ನಾನು ಅವರನ್ನು ದಂಡಿಸುವ ದಿನದಂದು ಅವರ ಪಾಪಕ್ಕೆ ತಕ್ಕಂತೆ ದಂಡಿಸುವೆನು.</verse>
				<verse number="35">ಇಸ್ರಯೇಲರು ಆರೋನನ ಕೈಯಿಂದ ಆ ಹೋರಿಕರುವನ್ನು ಮಾಡಿಸಿದ್ದರಿಂದ ಸರ್ವೇಶ್ವರ ಅವರನ್ನು ದಂಡಿಸಿದರು.</verse>
			</chapter>
			<chapter number="33">
				<verse number="1">ಮೋಶೆಗೆ ಸರ್ವೇಶ್ವರ ಸ್ವಾಮಿ ಹೇಳಿದ ಮಾತುಗಳಿವು: “ನೀನು ಈಜಿಪ್ಟಿನಿಂದ ಕರೆದುತಂದ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳಬಿಟ್ಟು ತೆರಳು. ನಾನು ಅಬ್ರಹಾಮ್, ಇಸಾಕ್, ಯಕೋಬ್ ಎಂಬುವರೊಡನೆ ಅವನ ಸಂತತಿಯವರಿಗೆ ಕೊಡುವುದಾಗಿ ಪ್ರಮಾಣ ಮಾಡಿದ ನಾಡಿಗೆ ಹೊರಟುಹೋಗು.</verse>
				<verse number="2">ನಾನು ಒಬ್ಬ ದೂತನನ್ನು ನಿನಗೆ ಮುಂದಾಗಿ ಕಳಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು, ಹಾಗು ಯೆಬೂಸಿಯರನ್ನು ಅಲ್ಲಿಂದ ಹೊರದೂಡುವೆನು.</verse>
				<verse number="3">ಅದು ಹಾಲೂ ಜೇನೂ ಹರಿಯುವ ಶ್ರೀಮಂತ ನಾಡು. ನಾನು ಸ್ವತಃ ನಿಮ್ಮ ಸಂಗಡ ಬರುವುದಿಲ್ಲ. ಏಕೆಂದರೆ ನೀವು ನನ್ನ ಆಜ್ಞೆಗೆ ತಲೆಬಾಗದ ಹಟಮಾರಿ ಜನ; ದಾರಿಯಲ್ಲೇ ನಾನು ನಿಮ್ಮನ್ನು ಸಂಹರಿಸಬೇಕಾಗಬಹುದು.</verse>
				<verse number="4">ಈ ದುಃಖಕರವಾದ ಮಾತುಗಳನ್ನು ಕೇಳಿ, ಇಸ್ರಯೇಲರು ಶೋಕತಪ್ತರಾದರು; ಒಬ್ಬರೂ ಒಡವೆ ವಸ್ತುಗಳನ್ನು ಧರಿಸಿಕೊಳ್ಳಲಿಲ್ಲ.</verse>
				<verse number="5">ಏಕೆಂದರೆ ಮೋಶೆಯ ಮುಖಾಂತರ ಸರ್ವೇಶ್ವರ, “ನೀವು ನನ್ನ ಆಜ್ಞೆಗಳಿಗೆ ಬಗ್ಗದ ಹಟಮಾರಿಗಳು. ನಾನು ಕ್ಷಣಮಾತ್ರ ನಿಮ್ಮೊಡನೆ ಬರುವುದಾದರೆ ನಿರ್ಮೂಲವಾಗಿಬಿಡುವಿರಿ, ಎಚ್ಚರಿಕೆ! ಆದ್ದರಿಂದ ನಿಮ್ಮ ಒಡವೆವಸ್ತುಗಳನ್ನು ತೆಗೆದುಬಿಡಿ. ನಿಮಗೇನು ಮಾಡಬೇಕೆಂದು ಆಲೋಚಿಸುವೆನು,” ಎಂದಿದ್ದರು.</verse>
				<verse number="6">ಅಂತೆಯೇ ಇಸ್ರಯೇಲರು ಹೋರೆಬ್ ಬೆಟ್ಟದಿಂದೀಚೆಗೆ ಒಡವೆವಸ್ತುಗಳನ್ನು ತೊಟ್ಟುಕೊಳ್ಳದೆ ಇದ್ದರು.</verse>
				<verse number="7">ಮೋಶೆ ಗುಡಾರವನ್ನು ಪಾಳೆಯದ ಹೊರಗೆ ದೂರದಲ್ಲಿ ಹಾಕಿಸುತ್ತಿದ್ದನು. ಅದಕ್ಕೆ ‘ದೇವದರ್ಶನದ ಗುಡಾರ’ ಎಂದು ಹೆಸರಿಟ್ಟನು. ಸರ್ವೇಶ್ವರನಿಂದ ಉತ್ತರವನ್ನು ಬಯಸುತ್ತಿದ್ದವರೆಲ್ಲರು ಪಾಳೆಯದ ಹೊರಗಿದ್ದ ಆ ದೇವದರ್ಶನದ ಗುಡಾರಕ್ಕೆ ಹೋಗುತ್ತಿದ್ದರು.</verse>
				<verse number="8">ಮೋಶೆ ಗುಡಾರಕ್ಕೆ ಹೋಗುವಾಗಲೆಲ್ಲಾ ಜನರೆಲ್ಲರು ಎದ್ದು ತಮ್ಮತಮ್ಮ ಡೇರೆಗಳ ಬಾಗಿಲಲ್ಲಿ ನಿಂತು ಮೋಶೆ ಆ ಗುಡಾರದೊಳಗೆ ಹೋಗುವ ತನಕ ಅವನ ಹಿಂದೆ ನೋಡುತ್ತಿದ್ದರು.</verse>
				<verse number="9">ಮೋಶೆ ಗುಡಾರದೊಳಕ್ಕೆ ಹೋದಕೂಡಲೆ ಮೇಘಸ್ತಂಭವೊಂದು ಇಳಿದು ಆ ಗುಡಾರದ ಬಾಗಿಲಲ್ಲಿ ನಿಲ್ಲುತ್ತಿತ್ತು. ಆಗ ಮೋಶೆಯ ಸಂಗಡ ಸರ್ವೇಶ್ವರ ಮಾತಾಡುತ್ತಿದ್ದರು.</verse>
				<verse number="10">ಆ ಮೇಘಸ್ತಂಭ ಗುಡಾರದ ಬಾಗಿಲಲ್ಲಿ ನಿಲ್ಲುವುದನ್ನು ಜನರೆಲ್ಲರು ನೋಡಿ, ಎದ್ದುನಿಂತು ತಮ್ಮತಮ್ಮ ಡೇರೆಗಳ ಬಾಗಿಲಲ್ಲೇ ಅಡ್ಡಬೀಳುತ್ತಿದ್ದರು.</verse>
				<verse number="11">ಒಬ್ಬ ಮನುಷ್ಯ ತನ್ನ ಗೆಳೆಯನೊಡನೆ ಹೇಗೆ ಮಾತಾಡುತ್ತಾನೋ ಹಾಗೆಯೇ ಸರ್ವೇಶ್ವರ ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡುತ್ತಿದ್ದರು. ತರುವಾಯ ಮೋಶೆ ಪಾಳೆಯಕ್ಕೆ ಮರಳಿ ಬರುತ್ತಿದ್ದನು. ಆದರೆ ನೂನನ ಮಗನಾದ ಯೆಹೋಶುವ ಎಂಬ ಹೆಸರುಳ್ಳ ಯುವಕನೊಬ್ಬನು ಮೋಶೆಯ ಶಿಷ್ಯನಾಗಿ ಆ ಗುಡಾರದಲ್ಲೇ ಇರುತ್ತಿದ್ದನು. ಅದನ್ನು ಬಿಟ್ಟು ಹೋಗುತ್ತಿರಲಿಲ್ಲ.</verse>
				<verse number="12">ಮೋಶೆ ಸರ್ವೇಶ್ವರ ಸ್ವಾಮಿಗೆ, ” ಈ ಜನರನ್ನು ಇಂಥ ಈ ನಾಡಿಗೆ ನಡೆಸಿಕೊಂಡು ಹೋಗಬೇಕೆಂದು ನನಗೆ ನೀವು ವಿಧಿಸಿದಿರಿ. ನನ್ನ ಸಂಗಡ ಬೇರೆ ಯಾರನ್ನು ಕಳುಹಿಸುವಿರೆಂದು ನನಗೆ ತಿಳಿಸಲಿಲ್ಲ. ‘ನಿನ್ನನ್ನು ಹೆಸರಿಡಿದು ಗುರುತಿಸಿದ್ದೇನೆ. ನಿನಗೆ ನನ್ನ ದಯೆ ದೊರಕಿದೆ,’ ಎಂದು ಹೇಳಿದ್ದೀರಿ.</verse>
				<verse number="13">ನನಗೆ ನಿಮ್ಮ ದಯೆ ದೊರಕಿದೆಯಾದರೆ ನಾನು ನಿಮ್ಮನ್ನು ಬಲ್ಲವನಾಗಿರುವಂತೆ ನಿಮ್ಮ ಮಾರ್ಗವನ್ನು ನನಗೆ ತೋರಿಸಿರಿ. ಆಗ ನಿಮ್ಮ ದಯೆ ನನಗೆ ದೊರಕಿದೆಯೆಂದು ತಿಳಿದುಕೊಳ್ಳುತ್ತೇನೆ. ಈ ಜನ ನಿಮ್ಮ ಪ್ರಜೆಯೆಂಬುದನ್ನು ನೆನಪಿನಲ್ಲಿಡಿ,” ಎಂದು ಅರಿಕೆ ಮಾಡಿದನು.</verse>
				<verse number="14">ಅದಕ್ಕೆ ಸರ್ವೇಶ್ವರ, “ನನ್ನ ಪ್ರಸನ್ನತೆ ನಿನ್ನ ಜೊತೆಯಲ್ಲಿ ಬರುವುದು. ನಾನು ನಿನಗೆ ವಿಶ್ರಾಂತಿ ನೀಡುವೆನು,” ಎಂದರು.</verse>
				<verse number="15">ಆಗ ಮೋಶೆ: “ನೀವೇ ನಮ್ಮ ಸಂಗಡ ಬಾರದೆ ಹೋದರೆ ನಮ್ಮನ್ನು ಇಲ್ಲಿಂದ ಕಳುಹಿಸಬೇಡಿ.</verse>
				<verse number="16">ನನಗೂ ನಿಮ್ಮ ಪ್ರಜೆಗಳಾದ ಇವರಿಗೂ ನಿಮ್ಮ ಅನುಗ್ರಹ ದೊರಕಿದೆ ಎಂಬುದು ನೀವೇ ನಮ್ಮ ಸಂಗಡ ಬರುವುದರಿಂದಲೇ ಹೊರತು ಬೇರೆ ಯಾವುದರಿಂದ ತಿಳಿದೀತು? ನೀವು ಬರುವುದರಿಂದ ನಾನೂ ನಿಮ್ಮ ಪ್ರಜೆಗಳಾದ ಇವರೂ ಜಗದಲ್ಲಿರುವ ಬೇರೆ ಎಲ್ಲಾ ಜನಗಳಿಗಿಂತಲೂ ವಿಶಿಷ್ಟರಾದವರೆಂಬುದು ಖಚಿತವಾಗುವುದು,” ಎಂದನು.</verse>
				<verse number="17">ಅದಕ್ಕೆ ಸರ್ವೇಶ್ವರ, “ನಿನ್ನ ಕೋರಿಕೆಯಂತೆ ಮಾಡುವೆನು. ಏಕೆಂದರೆ ನೀನು ನನ್ನ ಅನುಗ್ರಹಕ್ಕೆ ಪಾತ್ರನು; ನಿನ್ನನ್ನು ಹೆಸರಿಡಿದು ಗುರುತಿಸಿದ್ದೇನೆ,” ಎಂದು ಮೋಶೆಗೆ ಹೇಳಿದರು.</verse>
				<verse number="18">ಆಗ ಮೋಶೆ, “ನಿಮ್ಮ ಮಹಿಮೆಯನ್ನು ದಯಮಾಡಿ ನನಗೆ ತೋರಿಸಿ,” ಎಂದು ವಿನಂತಿಸಿದನು.</verse>
				<verse number="19">ಸರ್ವೇಶ್ವರ, “ನನ್ನ ಒಳ್ಳೆಯತನವೆಲ್ಲ ನಿನ್ನೆದುರಿಗೆ ಹಾದುಹೋಗುವಂತೆ ಮಾಡುವೆನು. ಸರ್ವೇಶ್ವರನಾದ ನನ್ನ ನಾಮದ ಮಹತ್ವವನ್ನು ನಿನ್ನೆದುರಿಗೆ ಪ್ರಕಟಿಸುವೆನು. ಯಾರ್ಯಾರ ಮೇಲೆ ದಯೆಯಿಡಲು ಆಶಿಸುತ್ತೇನೋ ಅವರ ಮೇಲೆ ದಯೆಯಿಡುತ್ತೇನೆ. ಯಾರ್ಯಾರನ್ನು ಕರುಣಿಸಲು ಆಶಿಸುತ್ತೇನೋ ಅವರನ್ನು ಕರುಣಿಸುತ್ತೇನೆ,” ಎಂದರು.</verse>
				<verse number="20">ಮತ್ತೆ ಅವರು, “ಆದರೆ ನೀನು ನನ್ನ ಮುಖವನ್ನು ನೋಡಲಾಗದು. ಏಕೆಂದರೆ ನನ್ನನ್ನು ನೋಡಿದ ಮಾನವ ಜೀವಂತನಾಗಿ ಉಳಿಯಲಾರ,” ಎಂದು ಹೇಳೀದರು.</verse>
				<verse number="21">ಇನ್ನೂ ಮೋಶೆಗೆ, “ಇಗೋ ಇಲ್ಲಿ ಸಮೀಪದಲ್ಲೇ ಒಂದು ಸ್ಥಳವಿದೇ. ನೀನು ಆ ಬಂಡೆಯ ಮೇಲೆ ನಿಂತಿರು.</verse>
				<verse number="22">ನನ್ನ ಮಹಿಮೆ ನಿನ್ನೆದುರಿಗೆ ದಾಟಿ ಹೋಗುವಾಗ ನಾನು ಆ ಬಂಡೆಯ ಸಂದಿನಲ್ಲಿ ನಿನ್ನನ್ನು ಇರಿಸಿ, ನಿನ್ನ ಮುಂದೆ ನಾನು ಹಾದುಹೋಗುವ ತನಕ ನಿನ್ನನ್ನು ನನ್ನ ಕೈಯಿಂದ ಮುಚ್ಚುವೆನು.</verse>
				<verse number="23">ಬಳಿಕ ನಾನು ಕೈ ತೆಗೆವೆನು, ಆಗ ನೀನು ನನ್ನ ಹಿಂಭಾಗವನ್ನು ನೋಡುವೆ. ಆದರೆ ನನ್ನ ಮುಖ ನಿನಗೆ ಕಾಣಿಸದು,” ಎಂದು ಸರ್ವೇಶ್ವರ ಹೇಳಿದರು.</verse>
			</chapter>
			<chapter number="34">
				<verse number="1">ಸರ್ವೇಶ್ವರ ಸ್ವಾಮಿ ಮೋಶೆಗೆ, “ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನು ಎರಡು ಕಲ್ಲಿನ ಹಲಗೆಗಳನ್ನು ಸಿದ್ಧಪಡಿಸಿಕೋ. ನೀನು ಒಡೆದುಬಿಟ್ಟ ಆ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ನಾನು ಈ ಹಲಗೆಗಳ ಮೇಲೆ ಬರೆಯುವೆನು.</verse>
				<verse number="2">ಬೆಳಿಗ್ಗೆ ನೀನು ಸಿದ್ಧವಾಗಿದ್ದು, ಸೀನಾಯಿ ಬೆಟ್ಟವನ್ನು ಹತ್ತಿ, ಅಲ್ಲಿ ಬೆಟ್ಟದ ತುದಿಯ ಮೇಲೆ ನನ್ನ ಸನ್ನಿಧಿಯಲ್ಲಿ ನಿಂತಿರು.</verse>
				<verse number="3">ಯಾರೂ ನಿನ್ನ ಜೊತೆಯಲ್ಲಿ ಮೇಲಕ್ಕೆ ಬರಕೂಡದು. ಈ ಬೆಟ್ಟದ ಮೇಲೆ ಯಾರೂ ಎಲ್ಲಿಯೂ ಕಾಣಿಸಕೂಡದು. ದನಕುರಿಗಳೂ ಈ ಬೆಟ್ಟದ ಮುಂದೆ ಮೇಯಕೂಡದು,” ಎಂದು ಹೇಳಿದರು.</verse>
				<verse number="4">ಅಂತೆಯೇ ಮೋಶೆ ಮೊದಲಿದ್ದ ಹಲಗೆಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಸಿದ್ಧಪಡಿಸಿಕೊಂಡು, ಸರ್ವೇಶ್ವರನ ಅಪ್ಪಣೆಯ ಮೇರೆಗೆ ಬೆಳಿಗ್ಗೆ ಎದ್ದು ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟವನ್ನು ಹತ್ತಿದನು.</verse>
				<verse number="5">ಆಗ ಸರ್ವೇಶ್ವರ ಸ್ವಾಮಿ ಮೇಘಾವೃತರಾಗಿ ಇಳಿದುಬಂದು ಅಲ್ಲಿ ಅವನ ಹತ್ತಿರ ನಿಂತು, ‘ಸರ್ವೇಶ್ವರ’ ಎಂಬ ತಮ್ಮ ನಾಮವನ್ನು ಪ್ರಕಟಿಸಿದರು.</verse>
				<verse number="6">ಸರ್ವೇಶ್ವರ ಮೋಶೆಯ ಎದುರಿನಲ್ಲಿ ಹಾದುಹೋಗುತ್ತಾ ಹೀಗೆಂದು ಪ್ರಕಟಿಸಿದರು: ಸರ್ವೇಶ್ವರನು; ಸರ್ವೇಶ್ವರನು ಕರುಣಾಮಯನು, ದಯಾಳು ದೇವರು. ತಟ್ಟನೆ ಸಿಟ್ಟುಗೊಳ್ಳದವನು, ಪ್ರೀತಿಪಾತ್ರನು, ನಂಬಿಗಸ್ತನು,</verse>
				<verse number="7">ಸಾವಿರಾರು ತಲೆಗಳವರೆಗೂ ಅಚಲಪ್ರೀತಿ ತೋರುವವನು, ದೋಷಾಪರಾಧಗಳನ್ನೂ ಪಾಪಗಳನ್ನೂ ಕ್ಷಮಿಸುವವನು; ಆದರೂ ತಪ್ಪಿತಸ್ಥರನ್ನು ಶಿಕ್ಷಿಸದೆ ಬಿಡದವನು. ಹೆತ್ತವರ ದೋಷಪರಿಣಾಮಗಳನ್ನು ಮಕ್ಕಳ ಮೇಲೆ ಮೂರುನಾಲ್ಕು ತಲೆಗಳವರೆಗೆ ಬರಮಾಡುವವರು.</verse>
				<verse number="8">ಕೂಡಲೇ ಮೋಶೆ ನೆಲದಮೇಲೆ ಅಡ್ಡಬಿದ್ದು ನಮಸ್ಕರಿಸಿ,</verse>
				<verse number="9">ಸ್ವಾಮಿ, ಸರ್ವೇಶ್ವರಾ, ನಿಮ್ಮ ಅನುಗ್ರಹ ನಮಗೆ ದೊರಕಿತಾದರೆ, ತಾವೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಹಟಮಾರಿಗಳು. ಆದರೂ ತಾವು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷಮಿಸಿ ನಿಮ್ಮ ಜನರಾಗುವಂತೆ ನಮ್ಮನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.</verse>
				<verse number="10">ಸರ್ವೇಶ್ವರ ಮೋಶೆಗೆ, “ಕೇಳು, ನಾನೊಂದು ಒಡಂಬಡಿಕೆಯನ್ನು ಮಾಡುತ್ತೇನೆ. ಜಗದಲ್ಲಿ ಯಾವ ನಾಡಿನಲ್ಲೂ ಯಾವ ಜನಾಂಗದಲ್ಲೂ ನಡೆಯದಂಥ ಮಹಾತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡೆಸುವೆನು. ನಿಮ್ಮ ಸುತ್ತಮುತ್ತಲಿರುವ ಜನರೆಲ್ಲರು ಸರ್ವೇಶ್ವರನಾದ ನಾನು ಮಾಡುವ ಮಹಾತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವುದು ಅದ್ಭುತಕರವಾದುದು.</verse>
				<verse number="11">ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಮುಂದೆಯೇ ಹೊರಡಿಸಿಬಿಡುವೆನು.</verse>
				<verse number="12">ನೀವು ಸೇರುವ ನಾಡಿನ ನಿವಾಸಿಗಳೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಮಾಡಿಕೊಂಡರೆ ಅದು ಕೊರಳನ್ನು ಸಿಕ್ಕಿಸುವ ಉರುಳಾಗುವುದು.</verse>
				<verse number="13">ಅವರ ಬಲಿಪೀಠಗಳನ್ನು ಕೆಡವಿಬಿಡಿ; ಅವರ ಕಲ್ಲುಕಂಬದ ವಿಗ್ರಹಗಳನ್ನು ಒಡೆದುಬಿಡಿ; ‘ಅಶೇರ’ ಎಂಬ ಸ್ತಂಭಗಳನ್ನು ಕಡಿದುಬಿಡಿ.</verse>
				<verse number="14">ನೀವು ಬೇರೆ ದೇವರ ಮುಂದೆ ಅಡ್ಡಬೀಳಬಾರದು; ಏಕೆಂದರೆ ಸ್ವಾಭಿಮಾನಿಯೆಂಬ ಹೆಸರುಳ್ಳ ಸರ್ವೇಶ್ವರನಾದ ನಾನು ನನಗೆ ಸಲ್ಲಬೇಕಾದ ಅಭಿಮಾನವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸುವುದಿಲ್ಲ.</verse>
				<verse number="15">ನೀವು ಆ ನಾಡಿನ ನಿವಾಸಿಗಳ ಸಂಗಡ ಒಪ್ಪಂದ ಮಾಡಿಕೊಳ್ಳದಂತೆ ಜಾಗರೂಕರಾಗಿರಿ. ಮಾಡಿಕೊಂಡರೆ ಅವರು ತಮ್ಮ ದೇವತೆಗಳನ್ನು ಪೂಜಿಸಿ ಬಲಿಯರ್ಪಿಸುವಾಗ ಬಲಿ ಭೋಜನಕ್ಕೆ ನಿಮ್ಮನ್ನು ಕರೆಯಬಹುದು. ನೀವು ಹೋಗಿ ಅದನ್ನು ಭುಜಿಸುವ ಸಂಭವವುಂಟು.</verse>
				<verse number="16">ಅದೂ ಅಲ್ಲದೆ ನೀವು ನಿಮ್ಮ ಗಂಡು ಮಕ್ಕಳಿಗೆ ಅವರಲ್ಲಿ ಹೆಣ್ಣುಗಳನ್ನು ತೆಗೆದುಕೊಳ್ಳುವುದಕ್ಕೆ ಆಸ್ಪದವುಂಟಾಗುವುದು. ಅನಂತರ ಆ ಸೊಸೆಯಂದಿರು ತೌರುಮನೆಯ ದೇವತೆಗಳನ್ನು ಪೂಜಿಸುವವರಾಗಿ ನಿಮ್ಮ ಮಕ್ಕಳನ್ನು ಅನ್ಯದೇವರುಗಳ ಪೂಜೆಯೆಂಬ ವ್ಯಭಿಚಾರಕ್ಕೆ ಎಳೆಯಬಹುದು. ಆದ್ದರಿಂದ ಎಚ್ಚರಿಕೆಯಾಗಿರಿ.</verse>
				<verse number="17">“ನಿಮಗಾಗಿ ದೇವರುಗಳ ಎರಕದ ವಿಗ್ರಹಗಳನ್ನು ಮಾಡಿಸಿಕೊಳ್ಳಬೇಡಿ.</verse>
				<verse number="18">“ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬಗಳನ್ನು ಆಚರಿಸಿರಿ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದ ನಿಯಮಿತ ಕಾಲದಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಚೈತ್ರಮಾಸದಲ್ಲಿ ಈಜಿಪ್ಟಿನಿಂದ ಬಿಡುಗಡೆಯಾಗಿ ಹೊರಬಂದದ್ದು.</verse>
				<verse number="19">“ಪ್ರಥಮ ಗರ್ಭಫಲವೆಲ್ಲಾ, ಅಂದರೆ ನಿಮ್ಮ ದನಕುರಿಗಳಲ್ಲಿ ಹುಟ್ಟುವ ಚೊಚ್ಚಲು ಮರಿಗಳೆಲ್ಲಾ ಗಂಡಾಗಿದ್ದರೆ ಅವು ನನ್ನವೇ.</verse>
				<verse number="20">ಕತ್ತೆಯ ಮರಿಗೆ ಬದಲಾಗಿ ಕುರಿಮರಿಯನ್ನು ಕೊಟ್ಟು ಆ ಕತ್ತೆಮರಿಯನ್ನು ಬಿಡಿಸಬಹುದು. ಹಾಗೆ ಬಿಡಿಸಲಾಗದೆ ಹೋದರೆ ಅದರ ಕುತ್ತಿಗೆ ಮುರಿದು ಕೊಂದುಬಿಡಬೇಕು. ಆದರೆ ನಿಮ್ಮ ಚೊಚ್ಚಲು ಗಂಡುಮಗುವನ್ನು ಕೊಲ್ಲದೆ, ಬದಲುಕೊಟ್ಟು ಬಿಡಿಸಲೇಬೇಕು. ಯಾರೂ ಬರೀಗೈಯಲ್ಲಿ ನನ್ನ ಮುಂದೆ ಕಾಣಿಸಿಕೊಳ್ಳಬಾರದು.”</verse>
				<verse number="21">“ಆರು ದಿವಸಗಳು ನೀವು ದುಡಿಯಬಹುದು. ಆದರೆ ಏಳನೆಯ ದಿನ ಯಾವ ದುಡಿಮೆಯನ್ನೂ ಮಾಡಬಾರದು. ಅದು ಉಳುವ ಕಾಲವಾಗಿರಲಿ, ಕೊಯ್ಯುವ ಕಾಲವಾಗಿರಲಿ ಏಳನೆಯ ದಿನ ದುಡಿಯದೆ ಇರಬೇಕು.</verse>
				<verse number="22">“ಹೊಸ ಗೋದಿ ಬೆಳೆಯ ಪ್ರಥಮ ಸಮರ್ಪಣೆಯ, ಅಂದರೆ (ಪಾಸ್ಕವಾದ ಏಳು) ವಾರಗಳ ಮೇಲೆ ನೀವು ಸುಗ್ಗಿಹಬ್ಬವನ್ನು ಆಚರಿಸಬೇಕು. ವರ್ಷದ ಕೊನೆಯಲ್ಲಿ ಬೆಳೆ ಒಕ್ಕಣೆಯ ಹಬ್ಬವನ್ನು ಆಚರಿಸಬೇಕು.</verse>
				<verse number="23">ವರ್ಷಕ್ಕೆ ಮೂರು ಸಾರಿ ನಿಮ್ಮಲ್ಲಿರುವ ಗಂಡಸರೆಲ್ಲರು ಇಸ್ರಯೇಲರ ದೇವರೂ ಸರ್ವೇಶ್ವರನೂ ಆದ ನನ್ನ ಸನ್ನಿಧಿಯಲ್ಲಿ ಸೇರಬೇಕು.</verse>
				<verse number="24">ನಾನು ನಿಮ್ಮ ಎದುರಿನಿಂದ ಅನ್ಯಜನರನ್ನು ಹೊರಡಿಸಿ ನಿಮ್ಮ ಎಲ್ಲೆಯನ್ನು ವಿಸ್ತರಿಸುವೆನು. ಅದೂ ಅಲ್ಲದೆ ನೀವು ವರ್ಷಕ್ಕೆ ಮೂರು ಸಾರಿ ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಸನ್ನಿಧಿಗೆ ಬರುವಾಗ ಯಾರೂ ನಿಮ್ಮ ನಾಡನ್ನು ಅಪಹರಿಸಲು ಅಪೇಕ್ಷಿಸುವುದಿಲ್ಲ.</verse>
				<verse number="25">ನನಗೆ ಬಲಿಯರ್ಪಿಸುವಾಗ ಆ ಬಲಿಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಸ್ಕದಲ್ಲಿ ನೀವು ಸಮರ್ಪಿಸುವ ಬಲಿ ಮಾಂಸವನ್ನು ಮರುದಿನದವರೆಗೂ ಉಳಿಸಬಾರದು.</verse>
				<verse number="26">“ಭೂಮಿಯ ಮೊದಲನೆಯ ಬೆಳೆಗಳಲ್ಲಿ ಶ್ರೇಷ್ಠವಾದುದನ್ನು ನಿಮ್ಮ ದೇವರೂ ಸರ್ವೇಶ್ವರನೂ ಆದ ನನ್ನ ಮಂದಿರಕ್ಕೆ ತರಬೇಕು. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.”</verse>
				<verse number="27">ಸರ್ವೇಶ್ವರ ಮೋಶೆಗೆ, “ನೀನು ಈ ವಾಕ್ಯಗಳನ್ನು ಬರೆ. ಏಕೆಂದರೆ ಈ ವಾಕ್ಯಗಳ ಆಧಾರದ ಮೇಲೆ ನಾನು ನಿನ್ನೊಂದಿಗೂ ಇಸ್ರಯೇಲರೊಂದಿಗೂ ಒಂದು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ,” ಎಂದು ಹೇಳಿದರು.</verse>
				<verse number="28">ಮೋಶೆ ಆ ಬೆಟ್ಟದಲ್ಲಿ ನಾಲ್ವತ್ತು ದಿನ ಹಗಲಿರುಳೂ ಅನ್ನಪಾನವಿಲ್ಲದೆ ಸರ್ವೇಶ್ವರನ ಸನ್ನಿಧಿಯಲ್ಲಿ ಇದ್ದನು. ಒಡಂಬಡಿಕೆಯ ವಾಕ್ಯಗಳನ್ನು, ಅಂದರೆ ಹತ್ತು ಆಜ್ಞೆಗಳನ್ನು, ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.</verse>
				<verse number="29">ಮೋಶೆ ಆಜ್ಞಾಶಾಸನಗಳಾದ ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಸೀನಾಯಿ ಬೆಟ್ಟದಿಂದ ಇಳಿದು ಬಂದಾಗ ಅವನ ಮುಖ ಪ್ರಕಾಶಮಾನವಾಗಿತ್ತು. ಏಕೆಂದರೆ ಅವನು ಸರ್ವೇಶ್ವರನ ಸಂಗಡ ಸಂಭಾಷಿಸಿದ್ದನು. ಆದರೆ ಅದು ಅವನಿಗೆ ತಿಳಿದಿರಲಿಲ್ಲ.</verse>
				<verse number="30">ಮೋಶೆಯ ಮುಖ ಹೀಗೆ ಪ್ರಕಾಶವಾಗಿರುವುದನ್ನು ಆರೋನನು ಮತ್ತು ಇಸ್ರಯೇಲರೆಲ್ಲರು ನೋಡಿ ಅವನ ಹತ್ತಿರಕ್ಕೆ ಬರಲು ಭಯಪಟ್ಟರು.</verse>
				<verse number="31">ಆದರೆ ಮೋಶೆ ಅವರನ್ನು ಕರೆದನು. ಆಗ ಆರೋನನು ಹಾಗು ಜನನಾಯಕರೆಲ್ಲರು ಅವನ ಬಳಿಗೆ ಬಂದರು. ಆಗ ಮೋಶೆ ಅವರ ಸಂಗಡ ಮಾತಾಡಿದನು.</verse>
				<verse number="32">ಅನಂತರ ಇಸ್ರಯೇಲರೆಲ್ಲರು ಕೂಡ ಹತ್ತಿರಕ್ಕೆ ಬಂದರು. ಮೋಶೆ ತಾನು ಸೀನಾಯಿ ಬೆಟ್ಟದಲ್ಲಿ ಸರ್ವೇಶ್ವರನಿಂದ ಹೊಂದಿದ ಆಜ್ಞೆಗಳನ್ನೆಲ್ಲ ಅವರಿಗೆ ತಿಳಿಸಿದನು.</verse>
				<verse number="33">ಅವರೊಡನೆ ಮಾತಾಡಿ ಮುಗಿಸಿದ ಮೇಲೆ ಮೋಶೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಂಡನು.</verse>
				<verse number="34">ಸರ್ವೇಶ್ವರನ ಸಂಗಡ ಮಾತಾಡಬೇಕೆಂದು ಅವರ ಸನ್ನಿಧಿಗೆ ಹೋಗುವಾಗಲೆಲ್ಲ ಅಲ್ಲಿಂದ ಹೊರಗೆ ಬರುವ ತನಕ ಅವನು ಆ ಮುಸುಕನ್ನು ತೆಗೆದಿಡುತ್ತಿದ್ದನು. ಹೊರಗೆ ಬಂದಾಗ ಸರ್ವೇಶ್ವರ ಆಜ್ಞಾಪಿಸಿದ್ದನ್ನೆಲ್ಲ ಇಸ್ರಯೇಲರಿಗೆ ತಿಳಿಸುತ್ತಿದ್ದನು.</verse>
				<verse number="35">ಮೋಶೆಯ ಮುಖ ಪ್ರಕಾಶಮಾನವಾಗಿರುವುದನ್ನು ಇಸ್ರಯೇಲರು ಗಮನಿಸುತ್ತಿದ್ದರು. ಆದಕಾರಣ ಅವನು ಸರ್ವೇಶ್ವರನ ಸಂಗಡ ಮಾತಾಡಲು ಹೋಗುವವರೆಗೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಂಡಿರುತ್ತಿದ್ದನು.</verse>
			</chapter>
			<chapter number="35">
				<verse number="1">ಮೋಶೆ ಇಸ್ರಯೇಲರ ಸಮಾಜವನ್ನೆಲ್ಲ ಸೇರಿಸಿ ಅವರಿಗೆ, “ನೀವು ಅನುಸರಿಸಬೇಕೆಂದು ಸರ್ವೇಶ್ವರ ಹೀಗೆ ಆಜ್ಞಾಪಿಸಿದ್ದಾರೆ:</verse>
				<verse number="2">ಆರು ದಿನಗಳು ದುಡಿಯಬೇಕು. ಏಳನೆಯ ದಿನ ಪರಿಶುದ್ಧವಾದ ದಿನ. ಅದು ಸರ್ವೇಶ್ವರನಿಗೆ ಮೀಸಲಾದ ಸಬ್ಬತ್ ದಿನ. ಆದ್ದರಿಂದ ನೀವು ಸಂಪೂರ್ಣವಾಗಿ ದುಡಿಮೆ ನಿಲ್ಲಿಸಬೇಕು. ಆ ದಿನ ದುಡಿಯುವವನಿಗೆ ಮರಣದಂಡನೆಯಾಗಬೇಕು.</verse>
				<verse number="3">ನೀವು ವಾಸಿಸುವ ಯಾವ ಮನೆಯಲ್ಲೇ ಆಗಲಿ, ಸಬ್ಬತ್ ದಿನದಂದು ಬೆಂಕಿಯನ್ನು ಹೊತ್ತಿಸಬಾರದು,” ಎಂದು ಹೇಳಿದನು.</verse>
				<verse number="4">ಮೋಶೆ ಇಸ್ರಯೇಲರ ಇಡೀ ಸಮಾಜವನ್ನು ಉದ್ದೇಶಿಸಿ: “ಸರ್ವೇಶ್ವರನ ಆಜ್ಞೆ ಇದು: ನೀವು ನಿಮ್ಮ ನಿಮ್ಮ ಆಸ್ತಿಪಾಸ್ತಿಯಿಂದ ಸರ್ವೇಶ್ವರನಿಗೆ ಕಾಣಿಕೆಯನ್ನು ಕೊಡಬೇಕು. ಮನಃಪೂರ್ವಕವಾಗಿ ಕೊಡಬೇಕು. ಸರ್ವೇಶ್ವರನಿಗೆ ತರಬೇಕಾದಂಥ ಕಾಣಿಕೆಗಳು ಇವು: ಚಿನ್ನ, ಬೆಳ್ಳಿ, ತಾಮ್ರ,</verse>
				<verse number="5">ನೀಲಿ, ಊದ, ಕಡುಗೆಂಪುವರ್ಣಗಳುಳ್ಳ ದಾರಗಳು,</verse>
				<verse number="6">ನಯವಾದ ನಾರುಬಟ್ಟೆಗಳು, ಆಡುಕೂದಲಿನ ಬಟ್ಟೆಗಳು,</verse>
				<verse number="7">ಹದಮಾಡಿದ ಕೆಂಪುಬಣ್ಣದ ಕುರಿದೊಗಲುಗಳು, ಕಡಲು ಹಂದಿಯ ತೊಗಲುಗಳು, ಜಾಲೀಮರ,</verse>
				<verse number="8">ದೀಪಕ್ಕೆ ಬೇಕಾದ ಎಣ್ಣೆ, ಅಭಿಷೇಕತೈಲಕ್ಕೆ ಹಾಗು ಪರಿಮಳಧೂಪಕ್ಕೆ ಬೇಕಾದ ಸುಗಂಧ ದ್ರವ್ಯಗಳು</verse>
				<verse number="9">ಮಹಾಯಾಜಕನ ಕವಚಕ್ಕೆ ಬೇಕಾದ ರತ್ನಗಳು ಮತ್ತು ವಕ್ಷಪದಕದಲ್ಲಿ ಖಚಿಸಬೇಕಾದ ನಾನಾ ರತ್ನಗಳು.</verse>
				<verse number="10">“ನಿಮ್ಮಲ್ಲಿರುವ ಶಿಲ್ಪಕಾರರೆಲ್ಲರು ಬಂದು ಸರ್ವೇಶ್ವರನು ಆಜ್ಞಾಪಿಸಿದವುಗಳನ್ನೆಲ್ಲ ಮಾಡಬೇಕು.</verse>
				<verse number="11">ಅವರು ಮಾಡಬೇಕಾದುವುಗಳು ಇವು: ದೇವದರ್ಶನದ ಗುಡಾರ,</verse>
				<verse number="12">ಅದರ ಮೇಲ್ಹೊದಿಕೆಗಳು, ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆ ಕಲ್ಲುಗಳು, ಕೃಪಾಸನ, ಅದನ್ನು ಮರೆಮಾಡುವ ತೆರೆ,</verse>
				<verse number="13">ಮೇಜು, ಅದರ ಗದ್ದಿಗೆಗಳು, ಅದರ ಉಪಕರಣಗಳು, ಅದರ ಮೇಲೆ ಇಡತಕ್ಕ ಕಾಣಿಕೆಯ ರೊಟ್ಟಿಗಳು,</verse>
				<verse number="14">ದೀಪವೃಕ್ಷ ಅದರ ಉಪಕರಣಗಳು, ಹಣತೆಗಳು, ದೀಪಕ್ಕೆ ಬೇಕಾದ ಎಣ್ಣೆ, ಧೂಪವೇದಿಕೆ, ಅದರ ಗದ್ದಿಗೆಗಳು,</verse>
				<verse number="15">ಅಭಿಷೇಕ ತೈಲ, ಪರಿಮಳ ದ್ರವ್ಯ, ಗುಡಾರದ ಬಾಗಿಲಿನ ಪರದೆ,</verse>
				<verse number="16">ಬಲಿಪೀಠ, ಅದರ ತಾಮ್ರದ ಜಾಳಿಗೆ, ಗದ್ದಿಗೆಗಳು, ಉಪಕರಣಗಳು, ನೀರಿನ ತೊಟ್ಟಿ, ಅದರ ಪೀಠ, ಅಂಗಳದ ತೆರೆಗಳು, ಕಂಬಗಳು,</verse>
				<verse number="17">ಗದ್ದಿಗೆ ಕಲ್ಲುಗಳು,</verse>
				<verse number="18">ಅಂಗಳದ ಬಾಗಿಲಿನ ಪರದೆ, ಗುಡಾರದ ಗೂಟಗಳು, ಅಂಗಳದ ಗೂಟಗಳು, ಅವುಗಳ ಹಗ್ಗಗಳು,</verse>
				<verse number="19">ಪವಿತ್ರಸ್ಥಾನದ ಸೇವೆಗೆ ಸುಂದರವಾದ ದೀಕ್ಷಾವಸ್ತ್ರಗಳು, ಅಂದರೆ ಮಹಾಯಾಜಕ ಆರೋನನಿಗೆ ಹಾಗು ಅವನ ಮಕ್ಕಳಿಗೆ ಬೇಕಾದ ವಸ್ತ್ರಗಳು.”</verse>
				<verse number="20">ಇದಾದ ಮೇಲೆ ಇಸ್ರಯೇಲರ ಸಮಾಜದವರೆಲ್ಲರು ಮೋಶೆಯ ಹತ್ತಿರದಿಂದ ಹೊರಟುಹೋದರು.</verse>
				<verse number="21">ಅವರಲ್ಲಿ ಉದಾರ ಹೃದಯಿಗಳು ಸ್ವಂತ ಇಷ್ಟದಿಂದ ಮುಂದೆ ಬಂದು ದೇವದರ್ಶನದ ಗುಡಾರದ ಕೆಲಸಕ್ಕೂ, ಅದರ ಸಮಸ್ತ ಸೇವೆಗೂ ಹಾಗೂ ದೀಕ್ಷಾವಸ್ತ್ರಗಳಿಗೂ ಬೇಕಾದುವುಗಳನ್ನು ಸರ್ವೇಶ್ವರನಿಗೆ ಕಾಣಿಕೆಯಾಗಿ ತಂದರು.</verse>
				<verse number="22">ಹೆಂಗಸರು ಹಾಗು ಗಂಡಸರು ಧಾರಾಳ ಮನಸ್ಸಿನಿಂದ ಸರ್ವೇಶ್ವರನಿಗೆ ಚಿನ್ನದ ಕಾಣಿಕೆಗಳನ್ನು, ಅಂದರೆ ಕಡಗ, ಮೂಗುತಿ, ಮುದ್ರೆಯುಂಗುರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.</verse>
				<verse number="23">ಯಾರಲ್ಲಿ ನೀಲಿ, ಧೂಮ, ಹಾಗು ರಕ್ತವರ್ಣಗಳುಳ್ಳ ದಾರಗಳು, ನಯವಾದ ನಾರುಬಟ್ಟೆ, ಆಡುಕೂದಲಿನ ಬಟ್ಟೆ, ಹದಮಾಡಿದ ಕೆಂಪುಬಣ್ಣದ ಕುರಿದೊಗಲು ಹಾಗು ಕಡಲುಹಂದಿಯ ತೊಗಲು ಇದ್ದವೋ ಅವರು ಅವುಗಳನ್ನು ತಂದುಕೊಟ್ಟರು.</verse>
				<verse number="24">ಯಾರಲ್ಲಿ ಬೆಳ್ಳಿ ಇಲ್ಲವೆ ತಾಮ್ರ ಇತ್ತೋ ಅವರು ಅವುಗಳನ್ನೇ ತಂದು ಸರ್ವೇಶ್ವರನಿಗೆ ಸಮರ್ಪಿಸಿದರು. ಯಾರ ಬಳಿಯಲ್ಲಿ ಗುಡಾರದ ಕೆಲಸಕ್ಕೆ ಬೇಕಾದ ಜಾಲೀಮರವಿತ್ತೋ ಅವರು ಅದನ್ನು ತಂದುಕೊಟ್ಟರು.</verse>
				<verse number="25">ನಿಪುಣೆಯರಾದ ಮಹಿಳೆಯರು ತಮ್ಮ ಕೈಗಳಿಂದ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ನೂಲನ್ನು ಹಾಗು ನಯವಾದ ನಾರಿನ ನೂಲನ್ನು ನೇಯ್ದು ಆ ನೂಲುಗಳನ್ನು ತಂದುಕೊಟ್ಟರು.</verse>
				<verse number="26">ನಿಪುಣೆಯರಾದ ಬೇರೆ ಮಹಿಳೆಯರು ಆಡಿನ ತುಪ್ಪಟವನ್ನು ನೇಯ್ದು ತಂದುಕೊಟ್ಟರು.</verse>
				<verse number="27">ಜನನಾಯಕರು ಮಹಾಯಾಜಕನ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳನ್ನು, ವಕ್ಷ ಕವಚದಲ್ಲಿ ಖಚಿಸಬೇಕಾದ ರತ್ನಗಳನ್ನು,</verse>
				<verse number="28">ದೀಪಕ್ಕೆ ಬೇಕಾದ ಎಣ್ಣೆಯನ್ನು, ಅಭಿಷೇಕ ತೈಲಕ್ಕೆ ಮತ್ತು ಪರಿಮಳ ಧೂಪಕ್ಕೆ ಬೇಕಾದ ಸುಗಂಧ ದ್ರವ್ಯಗಳನ್ನು ತಂದುಕೊಟ್ಟರು.</verse>
				<verse number="29">ಮೋಶೆಯ ಮುಖಾಂತರ ಸರ್ವೇಶ್ವರ ಆಜ್ಞಾಪಿಸಿದ ಎಲ್ಲ ಕೆಲಸಕಾರ್ಯಗಳಿಗೆ ಬೇಕಾದವುಗಳನ್ನು ಇಸ್ರಯೇಲಿನ ಸ್ತ್ರೀಪುರುಷರೆಲ್ಲರು ಹೃದಯಪೂರ್ವಕವಾಗಿಯೇ ತಂದೊಪ್ಪಿಸಿದರು.</verse>
				<verse number="30">ಮೋಶೆ ಇಸ್ರಯೇಲರಿಗೆ ಹೀಗೆಂದನು: “ಸರ್ವೇಶ್ವರ ಸ್ವಾಮಿ ಯೆಹೂದ ಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನೆಂಬುವನನ್ನು ಹೆಸರಿಸಿ ಆಯ್ಕೆ ಮಾಡಿದ್ದಾರೆ. ನಯನವಿರಾದ ಕೆಲಸಗಳನ್ನು ನಿಯೋಜಿಸುವುದಕ್ಕೂ,</verse>
				<verse number="31">ಚಿನ್ನ, ಬೆಳ್ಳಿ, ತಾಮ್ರಗಳಿಂದ ಕೆಲಸ ನಡೆಸುವುದಕ್ಕೂ, ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ವಿಚಿತ್ರ ಕೆತ್ತನೆ ಕೆಲಸ ಮಾಡುವುದಕ್ಕೂ</verse>
				<verse number="32">ಬೇರೆ ವಿವಿಧ ಶೃಂಗಾರದ ಕೆಲಸ ಮಾಡುವುದಕ್ಕೂ ಅವನನ್ನು ಆರಿಸಿಕೊಂಡಿದ್ದಾರೆ.</verse>
				<verse number="33">ಅವನಿಗೆ ದೈವಾತ್ಮಶಕ್ತಿಯನ್ನು ಕೊಟ್ಟು ಬೇಕಾದ ಜ್ಞಾನ, ವಿದ್ಯೆ, ವಿವೇಕ ಇವುಗಳನ್ನೂ ಸಕಲ ಶಿಲ್ಪಶಾಸ್ತ್ರಜ್ಞಾನವನ್ನೂ ಅನುಗ್ರಹಿಸಿದ್ದಾರೆ.</verse>
				<verse number="34">ಅದೂ ಅಲ್ಲದೆ, ಮತ್ತೊಬ್ಬರಿಗೆ ಕಲಿಸಿಕೊಡುವುದಕ್ಕೆ ಸಹ ಅವನಿಗೆ ಮತ್ತು ದಾನ್‍ಕುಲದ ಅಹೀಸಾಮಾಕನ ಮಗ ಒಹೋಲೀಯಾಬನಿಗೆ ವಿಶೇಷ ವರವನ್ನು ಕೊಟ್ಟಿದ್ದಾರೆ.</verse>
				<verse number="35">ಶಿಲ್ಪಿಗಳು, ಚಮತ್ಕಾರವಾದ ಕೆಲಸ ನಿಯೋಜಿಸುವವರು ಹಾಗು ನೀಲಿ, ಊದ ಹಾಗು ಕಡುಗೆಂಪು ವರ್ಣದ ದಾರದಿಂದಲೂ ನಯವಾದ ನಾರುಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲ ಕಸುಬುದಾರರು ನಡೆಸುವ ಕೆಲಸಗಳನ್ನು ನಿಯೋಜಿಸುವುದಕ್ಕೂ ಹಾಗು ಕಾರ್ಯಗತ ಮಾಡುವುದಕ್ಕೂ ಸರ್ವೇಶ್ವರ ಅವರಿಗೆ ಜ್ಞಾನವನ್ನು ಪೂರ್ತಿಯಾಗಿ ಅನುಗ್ರಹಿಸಿದ್ದಾರೆ.</verse>
			</chapter>
			<chapter number="36">
				<verse number="1">“ಬೆಚಲೇಲನು ಮತ್ತು ಒಹೋಲೀಯಾಬನು ಎಲ್ಲವನ್ನು ಸರ್ವೇಶ್ವರ ಸ್ವಾಮಿ ಆಜ್ಞಾಪಿಸಿದ ಪ್ರಕಾರವೇ ಮಾಡುವರು. ಬೇರೆ ಕಲೆಗಾರರು, ಅಂದರೆ ಸರ್ವೇಶ್ವರನಿಂದ ಜ್ಞಾನವಿವೇಕಗಳನ್ನು ಹೊಂದಿ, ದೇವಮಂದಿರವನ್ನು ನಿರ್ಮಿಸುವ ಕೆಲಸಕ್ಕೆ ಬೇಕಾದ ಸಕಲವಿಧ ವಸ್ತುಗಳನ್ನು ಮಾಡುವ ಕ್ರಮ ತಿಳಿದಿರುವವರು, ಅವರೊಂದಿಗೆ ಕೆಲಸ ಮಾಡುವರು,” ಎಂದನು.</verse>
				<verse number="2">ಬೆಚಲೇಲನನ್ನು ಒಹೋಲೀಯಾಬನನ್ನು ಮತ್ತು ಸರ್ವೇಶ್ವರನಿಂದ ಜ್ಞಾನಪಡೆದು ಕೆಲಸ ಕೈಗೊಳ್ಳಲು ಉತ್ಸುಕರಾಗಿದ್ದ ಕಲೆಗಾರರೆಲ್ಲರನ್ನು ಮೋಶೆ ತನ್ನ ಬಳಿಗೆ ಕರೆಸಿದನು.</verse>
				<verse number="3">ಅವರು ದೇವಮಂದಿರದ ನಿರ್ಮಾಣಕ್ಕಾಗಿ ಜನರು ಕೊಟ್ಟಿದ್ದ ಕಾಣಿಕೆಗಳನ್ನು ಮೋಶೆಯ ಕೈಯಿಂದ ತೆಗೆದುಕೊಂಡರು. ಇಸ್ರಯೇಲರು ಪ್ರತಿದಿನ ಬೆಳಿಗ್ಗೆ ಮೋಶೆಯ ಬಳಿಗೆ ಬಂದು ಹೆಚ್ಚೆಚ್ಚು ಕಾಣಿಕೆಗಳನ್ನು ಮನಃಪೂರ್ವಕವಾಗಿ ಕೊಡುತ್ತಿದ್ದರು.</verse>
				<verse number="4">ದೇವಮಂದಿರದ ನಿರ್ಮಾಣದಲ್ಲಿ ಮಗ್ನರಾಗಿದ್ದ ಆ ಶಿಲ್ಪಿಗಳೆಲ್ಲರು ತಮ್ಮ ತಮ್ಮ ಕೆಲಸವನ್ನು ಬಿಟ್ಟು ಮೋಶೆಯ ಬಳಿಗೆ ಬಂದು,</verse>
				<verse number="5">“ಸರ್ವೇಶ್ವರ ಆಜ್ಞಾಪಿಸಿದ ಕೆಲಸಕ್ಕೆ ಬೇಕಾದುದಕ್ಕಿಂತಲೂ ಬಹಳ ಹೆಚ್ಚಾಗಿ ಜನರು ಕಾಣಿಕೆಗಳನ್ನು ತರುತ್ತಿದ್ದಾರೆ,” ಎಂದು ಹೇಳಿದರು.</verse>
				<verse number="6">ಆಗ ಮೋಶೆ, “ದೇವಮಂದಿರದ ನಿರ್ಮಾಣಕ್ಕಾಗಿ ಯಾವ ಸ್ತ್ರೀಪುರುಷನು ಇನ್ನು ಮುಂದೆ ಏನನ್ನೂ ತರಬಾರದೆಂದು ಅಪ್ಪಣೆಮಾಡಿ, ಪಾಳೆಯದಲ್ಲಿ ಪ್ರಕಟಿಸಿ, ಜನರ ಕಾಣಿಕೆಗಳನ್ನು ನಿಲ್ಲಿಸಿಬಿಟ್ಟನು.</verse>
				<verse number="7">ನಿರ್ಮಾಣ ಕೆಲಸ ಮುಗಿಸುವುದಕ್ಕೆ ಬೇಕಾಗುವುದಕ್ಕಿಂತಲೂ ಹೆಚ್ಚಾಗಿ ಸರಕುಸಾಮಗ್ರಿಗಳನ್ನು ಶೇಖರಿಸಲಾಗಿತ್ತು.</verse>
				<verse number="8">ನಿಪುಣ ಶಿಲ್ಪಗಾರರೆಲ್ಲರು ಸೇರಿ ಹತ್ತು ತಾನು ನಯವಾದ ನಾರುಬಟ್ಟೆಯಿಂದ ಗುಡಾರವನ್ನು ನಿರ್ಮಿಸಿದರು. ಆ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮತ್ಕಾರವಾಗಿ ಕಸೂತಿಹಾಕಿ ಮಾಡಿದರು.</verse>
				<verse number="9">ಪ್ರತಿಯೊಂದು ಬಟ್ಟೆ ಇಪ್ಪತ್ತೆಂಟು ಮೊಳ ಉದ್ದ ಹಾಗು ನಾಲ್ಕು ಮೊಳ ಅಗಲವಾಗಿತ್ತು. ಎಲ್ಲ ಬಟ್ಟೆಗಳು ಒಂದೇ ಅಳತೆಯಾಗಿದ್ದವು.</verse>
				<verse number="10">ಐದೈದು ಬಟ್ಟೆಗಳನ್ನು ಒಂದೊಂದಾಗಿ ಜೋಡಿಸಿದರು.</verse>
				<verse number="11">ಈ ಎರಡು ಜೋಡನೆಗಳಲ್ಲಿ ಒಂದೊಂದರ ಕೊನೇ ಬಟ್ಟೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿದರು.</verse>
				<verse number="12">ಆ ಕುಣಿಕೆಗಳನ್ನು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರಾಗಿ ಇರಿಸಿದರು.</verse>
				<verse number="13">ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿ ಆ ಬಟ್ಟೆಗಳನ್ನು ಒಂದಕ್ಕೊಂದು ಕೂಡಿಸಿದರು. ಹೀಗೆ ಒಂದೇ ಗುಡಾರ ಆಯಿತು.</verse>
				<verse number="14">ಈ ಗುಡಾರದ ಮೇಲೆ ಹೊದಿಸುವುದಕ್ಕಾಗಿ ಆಡುಕೂದಲಿನ ಹನ್ನೊಂದು ತಾನು ಬಟ್ಟೆಗಳಿಂದ ಆ ಗುಡಾರಕ್ಕೆ ಮೇಲಣ ಡೇರೆಯನ್ನು ಮಾಡಿದರು.</verse>
				<verse number="15">ಒಂದೊಂದು ಬಟ್ಟೆಯೂ ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು; ಎಲ್ಲಾ ಬಟ್ಟೆಗಳೂ ಒಂದೇ ಅಳತೆಯಾಗಿದ್ದವು.</verse>
				<verse number="16">ಐದು ಬಟ್ಟೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಬಟ್ಟೆಗಳನ್ನು ಒಂದಾಗಿ ಜೋಡಿಸಿದರು.</verse>
				<verse number="17">ಒಂದೊಂದರ ಕೊನೇ ಬಟ್ಟೆಯ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿಸಿದರು.</verse>
				<verse number="18">ಒಂದೇ ಡೇರೆಯಾಗುವಂತೆ ಸಮಸ್ತವನ್ನು ಕೂಡಿಸುವುದಕ್ಕಾಗಿ ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿದರು.</verse>
				<verse number="19">ಅದಲ್ಲದೆ ಹದಮಾಡಿರುವ ಕುರಿದೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನೂ ಕಡಲುಹಂದಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿದರು.</verse>
				<verse number="20">ಗುಡಾರಕ್ಕೆ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿದರು.</verse>
				<verse number="21">ಪ್ರತಿಯೊಂದು ಚೌಕಟ್ಟು ಹತ್ತು ಮೊಳ ಉದ್ದವಾಗಿಯೂ ಒಂದುವರೆ ಮೊಳ ಅಗಲವಾಗಿಯೂ ಇತ್ತು;</verse>
				<verse number="22">ಪ್ರತಿಯೊಂದು ಚೌಕಟ್ಟೂ ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವುಪಟ್ಟಿಗಳುಳ್ಳದ್ದಾಗಿತ್ತು; ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆ ಮಾಡಿದರು.</verse>
				<verse number="23">ಗುಡಾರದ ದಕ್ಷಿಣ ದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು.</verse>
				<verse number="24">ನಾಲ್ವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಟ್ಟರು; ಒಂದೊಂದು ಚೌಕಟ್ಟಿನಲ್ಲಿರುವ ಎರಡು ನಿಲುವುಪಟ್ಟಿಗಳ ಕೆಳಗೆ ಒಂದೊಂದು ಗದ್ದಿಗೇಕಲ್ಲನ್ನು ಇಟ್ಟರು.</verse>
				<verse number="25">ಹಾಗೆಯೇ ಗುಡಾರದ ಉತ್ತರದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮತ್ತು</verse>
				<verse number="26">ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಗದ್ದಿಗೇಕಲ್ಲುಗಳ ಮೇರೆಗೆ ನಾಲ್ವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು.</verse>
				<verse number="27">ಗುಡಾರದ ಹಿಂಭಾಗಕ್ಕೆ, ಅಂದರೆ ಪಶ್ಚಿಮದಿಕ್ಕಿನಲ್ಲಿ ಆರು ಚೌಕಟ್ಟುಗಳನ್ನು ಮಾಡಿದರು.</verse>
				<verse number="28">ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿದರು;</verse>
				<verse number="29">ಅವು ಬುಡದಿಂದ ತುದಿಯವರೆಗೂ ಅಂದರೆ ಮೊದಲನೆಯ ಬಳೆಯ ತನಕ ಜೋಡಿಸಿದ್ದವು; ಹಾಗೆ ಎರಡು ಮೂಲೆಗಳಿಗೂ ಮಾಡಿದರು.</verse>
				<verse number="30">ಹೀಗೆ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೇಕಲ್ಲುಗಳೂ, ಅಂತೂ ಹದಿನಾರು ಗದ್ದಿಗೇಕಲ್ಲುಗಳೂ ಇದ್ದವು.</verse>
				<verse number="31">ಜಾಲೀಮರದಿಂದ ಅಗುಳಿಗಳನ್ನು ಮಾಡಿದರು.</verse>
				<verse number="32">ಹಿಂದುಗಡೆಯ ಅಂದರೆ ಪಶ್ಚಿಮಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿದರು.</verse>
				<verse number="33">ಚೌಕಟ್ಟುಗಳ ನಟ್ಟನಡುವೆಯಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ಮುಟ್ಟುವಂತೆ ಮಾಡಿದರು.</verse>
				<verse number="34">ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿದರು. ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಿದರು.</verse>
				<verse number="35">ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದ ಕೆರೂಬಿಗಳ ಚಿತ್ರವನ್ನು ಚಮತ್ಕಾರವಾಗಿ ಕಸೂತಿ ಹಾಕಿ ಒಂದು ತೆರೆಯನ್ನು ಮಾಡಿದರು.</verse>
				<verse number="36">ಅದಕ್ಕೆ ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿ ಚಿನ್ನದ ತಗಡುಗಳನ್ನು ಹೊದಿಸಿದರು; ಅವುಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿ, ನಾಲ್ಕು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಎರಕಹೊಯಿಸಿದರು.</verse>
				<verse number="37">ಡೇರೆಯ ಬಾಗಿಲಿಗೆ ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದ ವಿಚಿತ್ರವಾಗಿ ಕಸೂತಿಹಾಕಿ ಪರದೆಯನ್ನು ಮಾಡಿದರು.</verse>
				<verse number="38">ಆ ಪರದೆ ತೂಗಿಸುವುದಕ್ಕಾಗಿ ಐದು ಕಂಬಗಳನ್ನೂ ಅವುಗಳ ಕೊಂಡಿಗಳನ್ನೂ ಮಾಡಿ, ಅವುಗಳ ಬೋದಿಗೆಗಳಿಗೂ ಕಟ್ಟುಗಳಿಗೂ ಚಿನ್ನದ ತಗಡುಗಳನ್ನು ಹೊದಿಸಿದರು. ಅವುಗಳ ಐದು ಗದ್ದಿಗೇಕಲ್ಲುಗಳನ್ನು ತಾಮ್ರದಿಂದ ಮಾಡಿದರು.</verse>
			</chapter>
			<chapter number="37">
				<verse number="1">ಬೆಚಲೇಲನು ಜಾಲೀಮರದಿಂದ ಮಂಜೂಷವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.</verse>
				<verse number="2">ಚೊಕ್ಕಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಒಳಗಡೆಯೂ ಹೊದಿಸಿದನು; ಅದರ ಮೇಲೆ ಸುತ್ತಲೂ ಚಿನ್ನದ ತೋರಣ ಕಟ್ಟಿಸಿದನು.</verse>
				<verse number="3">ನಾಲ್ಕು ಬಂಗಾರದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ, ಅಂದರೆ ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇರಿಸಿದನು.</verse>
				<verse number="4">ಮತ್ತು ಜಾಲೀಮರದ ಗದ್ದುಗೆಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ</verse>
				<verse number="5">ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಅದನ್ನು ಹೊರುವುದಕ್ಕಾಗಿ ಸೇರಿಸಿದನು.</verse>
				<verse number="6">ಅದಲ್ಲದೆ ಚೊಕ್ಕಬಂಗಾರದ ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿತ್ತು.</verse>
				<verse number="7">ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ನಕಾಸಿಕೆಲಸದಿಂದ ಮಾಡಿದನು.</verse>
				<verse number="8">ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿ ಕೃಪಾಸನಕ್ಕೆ ಜೋಡಿಸಿದನು.</verse>
				<verse number="9">ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಇದ್ದವು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.</verse>
				<verse number="10">ಬೆಚಲೇಲನು ಜಾಲೀಮರದ ಮೇಜನ್ನು ಮಾಡಿದನು. ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದೂವರೆ ಮೊಳ ಎತ್ತರವೂ ಆಗಿತ್ತು.</verse>
				<verse number="11">ಅದಕ್ಕೆ ಚೊಕ್ಕಬಂಗಾರದ ತಗಡುಗಳನ್ನು ಹೊದಿಸಿ ಸುತ್ತಲೂ ಚಿನ್ನದ ತೋರಣ ಕಟ್ಟಿದನು.</verse>
				<verse number="12">ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡಪಟ್ಟಿಯನ್ನು ಮಾಡಿ ಅದಕ್ಕೂ ಚಿನ್ನದ ತೋರಣ ಕಟ್ಟಿದನು.</verse>
				<verse number="13">ಮೇಜನ್ನು ಎತ್ತುವ ಗದ್ದಿಗೆಗಳನ್ನು ಸೇರಿಸುವುದಕ್ಕಾಗಿ ಅದಕ್ಕೆ ನಾಲ್ಕು ಚಿನ್ನದ ಬಳೆಗಳನ್ನು ಎರಕ ಹೊಯಿಸಿ ಅದರ ನಾಲ್ಕು ಕಾಲುಗಳಲ್ಲಿ ಹಚ್ಚಿದನು.</verse>
				<verse number="14">ಆ ಬಳೆಗಳು ಅಡ್ಡಪಟ್ಟಿಗೆ ಹತ್ತಿಕೊಂಡಿದ್ದವು.</verse>
				<verse number="15">ಮೇಜನ್ನು ಹೊರುವುದಕ್ಕೆ ಗದ್ದಿಗೆಗಳನ್ನು ಜಾಲೀಮರದಿಂದ ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.</verse>
				<verse number="16">ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು, ಅಂದರೆ ಹರಿವಾಣಗಳು, ಧೂಪಾರತಿಗಳು, ಹೂಜಿಗಳು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳು ಇವುಗಳನ್ನು ಚೊಕ್ಕಬಂಗಾರದಿಂದ ಮಾಡಿದನು.</verse>
				<verse number="17">ಚೊಕ್ಕಬಂಗಾರದ ದೀಪವೃಕ್ಷವನ್ನು ಮಾಡಿದನು. ಅದರ ಬುಡವನ್ನೂ ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿದನು. ಆ ದೀಪಸ್ತಂಭವೆಲ್ಲಾ ಅಖಂಡವಾಗಿ ಮೊಗ್ಗುಗಳಂತೆಯೂ ಪುಷ್ಪಗಳಂತೆಯೂ ಅಲಂಕಾರವಾಗಿ ಕೆತ್ತಿತ್ತು.</verse>
				<verse number="18">ಕಂಬದ ಒಂದೊಂದು ಪಾರ್ಶ್ವದಲ್ಲಿ ಮೂರು ಮೂರು ಕೊಂಬೆಗಳು, ಅಂತೂ ಆರು ಕೊಂಬೆಗಳಿದ್ದವು.</verse>
				<verse number="19">ಪ್ರತಿಯೊಂದು ಕೊಂಬೆಯಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಪುಷ್ಪಾಲಂಕಾರಗಳಿದ್ದವು; ಒಂದೊಂದು ಅಲಂಕಾರಕ್ಕೆ ಒಂದು ಮೊಗ್ಗೂ ಒಂದು ಪುಷ್ಪವೂ ಇದ್ದವು. ಆರು ಕೊಂಬೆಗಳನ್ನೂ ಹಾಗೆಯೇ ಮಾಡಿದನು.</verse>
				<verse number="20">ದೀಪವೃಕ್ಷ ಕಡ್ಡಿಯಲ್ಲಿ ಮೊಗ್ಗುಗಳೂ ಪುಷ್ಪಗಳೂ ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳು ಇದ್ದವು.</verse>
				<verse number="21">ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಮೊಗ್ಗು ಇತ್ತು.</verse>
				<verse number="22">ಮೊಗ್ಗುಗಳೂ ಕೊಂಬೆಗಳೂ ಸಹಿತವಾದ ದೀಪವೃಕ್ಷವನ್ನೆಲ್ಲಾ ಒಟ್ಟಿಗೆ ಚೊಕ್ಕಬಂಗಾರದಿಂದ ನಕಾಸಿ ಕೆಲಸದಿಂದ ಮಾಡಿದನು.</verse>
				<verse number="23">ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಚೊಕ್ಕಬಂಗಾರದಿಂದ ಮಾಡಿದನು.</verse>
				<verse number="24">ದೀಪವೃಕ್ಷವೂ ಅದರ ಎಲ್ಲಾ ಉಪಕರಣಗಳೂ ಮೂವತ್ತೈದು ಕಿಲೋಗ್ರಾಂ ಚೊಕ್ಕಬಂಗಾರದವುಗಳಾಗಿದ್ದವು.</verse>
				<verse number="25">ಅವನು ಜಾಲೀಮರದಿಂದ ಧೂಪವೇದಿಕೆಯನ್ನು ಮಾಡಿದನು. ಅದು ಒಂದು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರವು ಎರಡು ಮೊಳವಾಗಿತ್ತು. ಅದರ ಕೊಂಬುಗಳು ಅದರ ಅಂಗಗಳಾಗಿದ್ದವು.</verse>
				<verse number="26">ಅದರ ಮೇಲ್ಭಾಗಕ್ಕೂ ನಾಲ್ಕು ಪಕ್ಕಗಳಿಗೂ ಕೊಂಬುಗಳಿಗೂ ಚೊಕ್ಕಬಂಗಾರದ ತಗಡುಗಳನ್ನು ಹೊದಿಸಿದನು. ಸುತ್ತಲೂ ಚಿನ್ನದ ತೋರಣ ಕಟ್ಟಿದನು.</verse>
				<verse number="27">ಅದನ್ನು ಎತ್ತುವ ಗದ್ದಿಗೆಗಳನ್ನು ಸೇರಿಸುವುದಕ್ಕಾಗಿ ಆ ತೋರಣದ ಕೆಳಗೆ ವೇದಿಕೆಯ ಎರಡು ಪಾರ್ಶ್ವಗಳ ಮೂಲೆಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಬಿಗಿಸಿದನು.</verse>
				<verse number="28">ವೇದಿಕೆಯನ್ನು ಹೊರುವುದಕ್ಕೆ ಗದ್ದಿಗೆಗಳನ್ನು ಜಾಲೀಮರದಿಂದ ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.</verse>
				<verse number="29">ಅದಲ್ಲದೆ ಅವನು ದೇವರ ಸೇವೆಗೆ ನೇಮಕವಾದ ಅಭಿಷೇಕ ತೈಲವನ್ನು ಹಾಗು ಪರಿಮಳದ್ರವ್ಯಗಳಿಂದ ಮಾಡಲಾದ ಅಪ್ಪಟವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಕಾರರ ವಿಧಾನದ ಮೇರೆಗೆ ತಯಾರಿಸಿದನು.</verse>
			</chapter>
			<chapter number="38">
				<verse number="1">ಅವನು ಬಲಿಪೀಠವನ್ನು ಜಾಲಿಮರದಿಂದ ಮಾಡಿದನು. ಅದು ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿತ್ತು; ಅದರ ಎತ್ತರ ಮೂರು ಮೊಳವಾಗಿತ್ತು.</verse>
				<verse number="2">ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬೆಗಳನ್ನು ಮಾಡಿದನು; ಅವು ಬಲಿಪೀಠದ ಅಂಗಾಂಗಗಳಾಗಿದ್ದವು. ಆ ಪೀಠಕ್ಕೆ ತಾಮ್ರದ ತಗಡುಗಳನ್ನು ಹೊದಿಸಿದನು.</verse>
				<verse number="3">ಪೀಠದ ಉಪಕರಣಗಳನ್ನೆಲ್ಲಾ ಅಂದರೆ ಅದರ ಬಟ್ಟಲುಗಳು, ಸಲಿಕೆಗಳು, ಬೋಗುಣಿಗಳು, ಮುಳ್ಳುಗಳು, ಅಗ್ಗಿಷ್ಟಿಕೆಗಳು ಇವುಗಳನ್ನೆಲ್ಲಾ ತಾಮ್ರದಿಂದ ಮಾಡಿದನು.</verse>
				<verse number="4">ಪೀಠದ ಹೆಣಿಗೇ ಕೆಲಸದಿಂದ ತಾಮ್ರದ ಜಾಳಿಗೆಯನ್ನು ಮಾಡಿದನು. ಅದು ಪೀಠದ ಸುತ್ತಲಿರುವ ಕಟ್ಟೆಯ ಕೆಳಗೆ ಪೀಠದ ಬುಡದಿಂದ ನಡುವಿನ ತನಕ ಇರುವಂತೆ ಹಾಕಿದನು.</verse>
				<verse number="5">ಪೀಠವನ್ನು ಎತ್ತುವ ಗದ್ದಿಗೆಗಳನ್ನು ಸೇರಿಸುವುದಕ್ಕಾಗಿ ತಾಮ್ರದ ಜಾಳಿಗೆಯ ನಾಲ್ಕು ಮೂಲೆಗಳಲ್ಲಿ ನಾಲ್ಕು ಬಳೆಗಳನ್ನು ಎರಕಹೊಯಿದನು.</verse>
				<verse number="6">ಪೀಠವನ್ನು ಹೊರುವ ಗದ್ದಿಗೆಗಳನ್ನು ಜಾಲಿಮರದಿಂದ ಮಾಡಿ ತಾಮ್ರದ ತಗಡುಗಳನ್ನು ಹೊದಿಸಿ</verse>
				<verse number="7">ಅದರ ಎರಡು ಪಕ್ಕಗಳಲ್ಲಿರುವ ಬಳೆಗಳಲ್ಲಿ ಸೇರಿಸಿದನು. ಆ ಪೀಠವನ್ನು ಹಲಗೆಗಳಿಂದ ಪೆಟ್ಟಿಗೆಯಂತೆ ಮಾಡಿದನು.</verse>
				<verse number="8">ದೇವದರ್ಶನದ ಗುಡಾರದ ಬಾಗಿಲಲ್ಲಿ ಸೇವೆಮಾಡುತ್ತಿದ್ದ ಮಹಿಳೆಯರು ಕೊಟ್ಟ ತಾಮ್ರದ ದರ್ಪಣಗಳಿಂದ ನೀರಿನ ತೊಟ್ಟಿಯನ್ನೂ ಅದರ ಪೀಠವನ್ನೂ ಮಾಡಿದನು.</verse>
				<verse number="9">ಗುಡಾರಕ್ಕೆ ಅಂಗಳವನ್ನೂ ಮಾಡಿದನು. ಆ ಅಂಗಳದ ದಕ್ಷಿಣದ ಕಡೆಯಲ್ಲಿ ಇದ್ದ ತೆರೆಗಳನ್ನು ಹುರಿನಾರಿನ ಬಟ್ಟೆಯಿಂದ ಮಾಡಲಾಗಿತ್ತು. ಅವು ನೂರು ಮೊಳ ಉದ್ದವಾಗಿದ್ದವು.</verse>
				<verse number="10">ಆ ಕಡೆಯಲ್ಲಿ ಇಪ್ಪತ್ತು ಕಂಬಗಳೂ ಅವುಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವು.</verse>
				<verse number="11">ಉತ್ತರ ಕಡೆಯಲ್ಲಿಯೂ ನೂರು ಮೊಳ ಉದ್ದವಾದ ತೆರೆಗಳೂ ಇಪ್ಪತ್ತು ಕಂಬಗಳೂ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವು.</verse>
				<verse number="12">ಪಶ್ಚಿಮ ಕಡೆಯಲ್ಲಿ ಐವತ್ತು ಮೊಳ ಉದ್ದವಾದ ತೆರೆಗಳೂ ಹತ್ತು ಕಂಬಗಳೂ ಹತ್ತು ಗದ್ದಿಗೇಕಲ್ಲುಗಳೂ ಇದ್ದವು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವು</verse>
				<verse number="13">ಪೂರ್ವದಿಕ್ಕಿನಲ್ಲಿಯೂ ಅಂಗಳದ ಅಗಲವು ಐವತ್ತು ಮೊಳವಾಗಿತ್ತು.</verse>
				<verse number="14">ಅಲ್ಲಿ ಬಾಗಿಲಿನ ಎರಡು ಕಡೆಗಳಲ್ಲಿಯೂ ಹದಿನೈದು ಮೊಳ ಉದ್ದವಾದ ತೆರೆಗಳೂ ಅವುಗಳಿಗೆ ಮೂರು ಮೂರು ಗದ್ದಿಗೇಕಲ್ಲುಗಳೂ ಇದ್ದವು.</verse>
				<verse number="15"></verse>
				<verse number="16">ಅಂಗಳದ ಸುತ್ತಲಿರುವ ತೆರೆಗಳೆಲ್ಲಾ ಹುರಿನಾರಿನ ಬಟ್ಟೆಯಿಂದಲೇ ಮಾಡಲಾಗಿತ್ತು.</verse>
				<verse number="17">ಕಂಬಗಳ ಗದ್ದಿಗೇಕಲ್ಲುಗಳು ತಾಮ್ರದವುಗಳು; ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೆಳ್ಳಿಯವು; ಅವುಗಳ ಬೋದಿಗೆಗಳು ಬೆಳ್ಳಿಯ ತಗಡುಗಳಿಂದ ಮಾಡಲ್ಪಟ್ಟವು. ಅಂಗಳದ ಎಲ್ಲಾ ಕಂಬಗಳಿಗೂ ಬೆಳ್ಳಿಯ ಕಟ್ಟುಗಳಿದ್ದವು.</verse>
				<verse number="18">ಅಂಗಳದ ಬಾಗಲಲ್ಲಿದ್ದ ಪರದೆಯು ಹುರಿನಾರಿನ ಬಟ್ಟೆಯಿಂದಲೂ ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದವರ ಕೈಯಿಂದ ಮಾಡಲ್ಪಟ್ಟಿತು. ಅದರ ಉದ್ದ ಇಪ್ಪತ್ತು ಮೊಳವಾಗಿತ್ತು; ಅದರ ಅಗಲ ಅಂಗಳದ ಮಿಕ್ಕ ತೆರೆಗಳಂತೆ ಐದು ಮೊಳ.</verse>
				<verse number="19">ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ತಾಮ್ರದ ಗದ್ದಿಗೇಕಲ್ಲುಗಳೂ ಇದ್ದವು. ಕಂಬಗಳ ಕೊಂಡಿಗಳೂ ಕಟ್ಟುಗಳೂ ಬೋದಿಗೆಗಳಿಗೆ ಹೊದಿಸಲ್ಪಟ್ಟ ತಗಡುಗಳೂ ಬೆಳ್ಳಿಯವು.</verse>
				<verse number="20">ಗುಡಾರದ ಗೂಟಗಳೂ ಅಂಗಳದ ಗೂಟಗಳೂ ಎಲ್ಲಾ ತಾಮ್ರದವುಗಳು.</verse>
				<verse number="21">ದೇವದರ್ಶನದ ಗುಡಾರವನ್ನು ನಿರ್ಮಿಸಿದಾಗ ಉಪಯೋಗಿಸಿದ ಲೋಹಗಳ ಲೆಕ್ಕ ಮೋಶೆಯ ಆಜ್ಞೆಯ ಮೇರೆಗೆ ಮಹಾಯಾಜಕನಾದ ಆರೋನನ ಮಗ ಈತಾಮಾರನು ಲೇವಿಯರ ಕೈಯಿಂದ ಮಾಡಿಸಿದ ಪಟ್ಟಿ:</verse>
				<verse number="22">ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದವನು ಯೆಹೂದ ಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿದ್ದ ಬೆಚಲೇಲನು.</verse>
				<verse number="23">ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನು ಸೇರಿದ್ದನು. ಇವನು ಶಿಲ್ಪಕಲೆ ಬಲ್ಲವನು. ಕಲಾತ್ಮಕ ಕೆಲಸವನ್ನು ನಿಯೋಜಿಸುವವನು ಮತ್ತು ನಾರಿನ ಬಟ್ಟೆಯಲ್ಲಿ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ನೂಲಿನಿಂದ ಕಸೂತಿ ಕೆಲಸಮಾಡುವವನು.</verse>
				<verse number="24">ದೇವಮಂದಿರದ ವಿವಿಧ ಕೆಲಸದಲ್ಲಿ ಉಪಯೋಗಿಸಿದ ಕಾಣಿಕೆಯ ಬಂಗಾರದ ತೂಕ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಸುಮಾರು ಒಂದು ಸಾವಿರ ಕಿಲೋಗ್ರಾಂ ಇತ್ತು.</verse>
				<verse number="25">ಬೆಳ್ಳಿಯ ತೂಕ ಸುಮಾರು 3,430 ಕಿಲೋಗ್ರಾಂ ಇತ್ತು. ಇದು ಜನಗಣತಿಯಲ್ಲಿ ಸೇರಿಸಲಾಗಿದ್ದ ಇಪ್ಪತ್ತು ವರ್ಷದವರು ಮತ್ತು ಅದಕ್ಕೂ ಹೆಚ್ಚಿನ ವಯಸ್ಸಿನವರು ದೇವರ ಸೇವೆಗೆ ನೇಮಕವಾದ ನಾಣ್ಯದ ಮೇರೆಗೆ ಕೊಟ್ಟ ಮೊತ್ತ. ಆರುಲಕ್ಷ, ಮೂರು ಸಾವಿರದ ಐನೂರ ಐವತ್ತು ಮಂದಿಯನ್ನು ಜನಗಣತಿಯಲ್ಲಿ ಹೀಗೆ ಸೇರಿಸಲಾಗಿತ್ತು.</verse>
				<verse number="26"></verse>
				<verse number="27">ಈ ಬೆಳ್ಳಿಯಲ್ಲಿ 3,400 ಕಿಲೋಗ್ರಾಂನ್ನು ದೇವಮಂದಿರದ ನೂರು ಗದ್ದಿಗೇಕಲ್ಲುಗಳನ್ನು ಹಾಗು ತೆರೆಯ ಕಂಬಗಳ ಗದ್ದಿಗೇಕಲ್ಲುಗಳನ್ನು ಎರಕ ಹೊಯ್ಯಲು ಉಪಯೋಗಿಸಲಾಗಿತ್ತು. ಒಂದೊಂದು ಗದ್ದಿಗೆಗೆ 34 ಕಿಲೋಗ್ರಾಂನ್ನು ಉಪಯೋಗಿಸಲಾಗಿತ್ತು.</verse>
				<verse number="28">ಮಿಕ್ಕ 34 ಕಿಲೋಗ್ರಾಂನಿಂದ ಕಂಬಗಳಿಗೆ ಕೊಂಡಿಗಳನ್ನು ಹಾಗು ಕಟ್ಟುಗಳನ್ನು ಮಾಡಿ ಅವುಗಳ ಬೋದಿಗೆಗಳಿಗೆ ತಗಡುಗಳನ್ನು ಹೊದಿಸಿದ್ದರು.</verse>
				<verse number="29">ಜನರು ಕಾಣಿಕೆಯಾಗಿ ಕೊಟ್ಟ ತಾಮ್ರದ ಮೊತ್ತ 2,425 ಕಿಲೋಗ್ರಾಂ.</verse>
				<verse number="30">ಇದರಿಂದ ದೇವದರ್ಶನದ ಗುಡಾರದ ಬಾಗಿಲಿಗೆ ಗದ್ದಿಗೇಕಲ್ಲುಗಳನ್ನು, ತಾಮ್ರದ ಬಲಿಪೀಠವನ್ನು, ಅದರ ತಾಮ್ರದ ಜಾಳಿಗೆಯನ್ನು, ಬಲಿಪೀಠದ ಎಲ್ಲ ಉಪಕರಣಗಳನ್ನು</verse>
				<verse number="31">ಅಂಗಳದ ಸುತ್ತಲಿನ ಗದ್ದಿಗೇಕಲ್ಲುಗಳನ್ನು, ಗುಡಾರದ ಮತ್ತು ಅಂಗಳದ ಎಲ್ಲಾ ಗೂಟಗಳನ್ನು ಮಾಡಿದನು.</verse>
			</chapter>
			<chapter number="39">
				<verse number="1">ಸರ್ವೇಶ್ವರ ಸ್ವಾಮಿ ಮೋಶೆಗ ಆಜ್ಞಾಪಿಸಿದಂತೆ ಆ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನು ಮತ್ತು ಆರೋನನಿಗೆ ದೀಕ್ಷಾವಸ್ತ್ರಗಳನ್ನು ಮಾಡಿದರು.</verse>
				<verse number="2">ಮಹಾಯಾಜಕನ ‘ಏಫೋದ್’ ಎಂಬ ಕವಚವನ್ನು ಹುರಿನಾರಿನ ಬಟ್ಟೆಯಿಂದಲೂ ಮತ್ತು ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದಲೂ ಮಾಡಿದರು.</verse>
				<verse number="3">ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದೊಡನೆ ಮತ್ತು ನಾರಿನ ಬಟ್ಟೆಯೊಡನೆ ಕಲಾತ್ಮಕ ಕೆಲಸದವರ ಪದ್ಧತಿಯ ಮೇರೆಗೆ ಕಸೂತಿ ಕೆಲಸ ಮಾಡುವುದಕ್ಕಾಗಿ ಬಂಗಾರವನ್ನು ತಟ್ಟಿ ತಗಡುಗಳನ್ನು ಮಾಡಿ, ಸಣ್ಣ ಸಣ್ಣ ಎಳೆಗಳಾಗಿ ಕತ್ತರಿಸಿದರು</verse>
				<verse number="4">ಆ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳನ್ನು ಮಾಡಿದರು. ಅದರ ಎರಡು ಕೊನೆಗಳನ್ನು ಜೋಡಿಸಲಾಯಿತು.</verse>
				<verse number="5">ಕವಚದ ಮೇಲಿದ್ದ ಅಪೂರ್ವವಾದ ಕಸೂತಿ ನಡುಕಟ್ಟು ಕವಚಕ್ಕೆ ಅಂಗವಾಗಿದ್ದು ಅದರಂತೆಯೇ ಹುರಿನಾರಿನ ಬಟ್ಟೆಯಿಂದಲೂ, ಚಿನ್ನದ ದಾರದಿಂದಲೂ ಮತ್ತು ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದಲು ತಯಾರಿಸಲಾಗಿತ್ತು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಲಾಗಿತ್ತು.</verse>
				<verse number="6">ಮುದ್ರಾರತ್ನವನ್ನು ಕೆತ್ತುವ ರೀತಿಯಲ್ಲಿ ಎರಡು ಗೋಮೇಧಕ ರತ್ನಗಳಲ್ಲಿ ಇಸ್ರಯೇಲರ ಹನ್ನೆರಡು ಕುಲಗಳ ಹೆಸರುಗಳನ್ನು ಕೆತ್ತಿ ಆ ರತ್ನಗಳನ್ನು ಕುಂದಣದಲ್ಲಿ ಕಟ್ಟಿದರು.</verse>
				<verse number="7">ಆ ಎರಡು ರತ್ನಗಳು ಇಸ್ರಯೇಲರ ಜ್ಞಾಪಕಾರ್ಥವಾದ ರತ್ನಗಳಾಗುವಂತೆ ಅವುಗಳನ್ನು ಕವಚದ ಹೆಗಲಿನ ಮೇಲಿರುವ ಪಟ್ಟಿಗಳಲ್ಲಿ ಬಿಗಿಸಿದರು. ಸರ್ವೇಶ್ವರ ಮೋಶೆಗೆ ಹಾಗೆಯೇ ಆಜ್ಞಾಪಿಸಿದ್ದರು.</verse>
				<verse number="8">‘ಏಫೋದ್’ ಕವಚದಂತೆಯೇ, ಚಿನ್ನದ ದಾರದಿಂದಲೂ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದಲೂ ಹುರಿನಾರಿನ ಬಟ್ಟೆಯಲ್ಲಿ ಕಸೂತಿ ಕೆಲಸದಿಂದ ಕೂಡಿದ ಒಂದು ಚೀಲದಂಥ ವಕ್ಷಪದಕವನ್ನು ಮಾಡಿದರು.</verse>
				<verse number="9">ಅದು ಚಚ್ಚೌಕವಾಗಿತ್ತು, ಎರಡು ಪದರುಳ್ಳದಾಗಿತ್ತು; ಅದು ಒಂದು ಗೇಣುದ್ದವೂ, ಒಂದು ಗೇಣಗಲವೂ ಇತ್ತು.</verse>
				<verse number="10">ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಖಚಿಸಿದರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಸ್ಫಟಿಕಗಳು,</verse>
				<verse number="11">ಎರಡನೆಯ ಸಾಲಿನಲ್ಲಿ ಕೆಂಪರಲು ನೀಲ ಪಚ್ಚೆಗಳು,</verse>
				<verse number="12">ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಗೋಮೇಧಕ ಧೂಮ್ರಮಣಿಗಳು,</verse>
				<verse number="13">ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ, ವೈಢೂರ್ಯಗಳೂ ಚಿನ್ನದ ಜವೆಯ ಕಲ್ಲುಗಳಲ್ಲಿ ಸೇರಿಸಲಾಗಿದ್ದವು.</verse>
				<verse number="14">ಇಸ್ರಯೇಲರ ಕುಲಗಳ ಸಂಖ್ಯೆಯ ಪ್ರಕಾರ ಹನ್ನೆರಡು ರತ್ನಗಳಿದ್ದವು. ಮುದ್ರಾರತ್ನದಲ್ಲಿ ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಲಾಗಿತ್ತು.</verse>
				<verse number="15">ವಕ್ಷಪದಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಚೊಕ್ಕಬಂಗಾರದ ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿದರು.</verse>
				<verse number="16">ಎರಡು ಚಿನ್ನದ ಜವೆಗಳನ್ನೂ ಎರಡು ಚಿನ್ನದ ಉಂಗುರಗಳನ್ನೂ ಮಾಡಿ ಆ ಉಂಗುರಗಳನ್ನು ಫಲಕದ ಎರಡು ಮೂಲೆಗಳಲ್ಲಿ ತಗಲಿಸಿದರು.</verse>
				<verse number="17">ಹೆಣಿಗೆ ಕೆಲಸದ ಆ ಎರಡು ಚಿನ್ನದ ಸರಪಣಿಗಳನ್ನು ಫಲಕದ ಮೂಲೆಗಳಲ್ಲಿರುವ ಉಂಗುರಗಳಿಗೆ ಸಿಕ್ಕಿಸಿದರು.</verse>
				<verse number="18">ಹೆಣಿಗೆ ಕೆಲಸದ ಆ ಸರಪಣಿಗಳ ಕೊನೆಗಳನ್ನು ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಜವೆಗಳ ಮುಂಭಾಗಕ್ಕೆ ಸಿಕ್ಕಿಸಿದರು.</verse>
				<verse number="19">ಅದಲ್ಲದೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಪದಕದ ಒಳಗಣ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲೇ ಇಟ್ಟರು.</verse>
				<verse number="20">ಮತ್ತು ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಆ ಚಿತ್ರಕಲೆಯಿಂದ ಕೂಡಿದ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಿದರು.</verse>
				<verse number="21">ಪದಕವು ವಿಚಿತ್ರವಾದ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ ಕವಚದಿಂದ ಕಳಚಿಬೀಳದಂತೆಯೂ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿದಾರದಿಂದ ಕಟ್ಟಿದರು. ಸರ್ವೇಶ್ವರ ಮೋಶೆಗೆ ಹಾಗೆಯೇ ಆಜ್ಞಾಪಿಸಿದ್ದರು.</verse>
				<verse number="22">ಕವಚದ ಸಂಗಡ ತೊಟ್ಟುಕೊಳ್ಳಬೇಕಾದ ಮೇಲಂಗಿಯನ್ನು ನೀಲಿಬಣ್ಣದ ಬಟ್ಟೆಯಿಂದ ಕಸೂತಿ ಕೆಲಸದಿಂದ ಮಾಡಿದನು.</verse>
				<verse number="23">ತಲೆದೂರಿಸುವುದಕ್ಕೆ ಅದರಲ್ಲಿ ಸಂದು ಮಾಡಿ ಅದು ಹರಿಯದಂತೆ ಯುದ್ಧದ ಕವಚದೋಪಾದಿಯಲ್ಲಿ ಆ ಸಂದಿನ ಸುತ್ತಲು ನೇಯ್ಗೆಪಟ್ಟಿಯನ್ನು ಹಾಕಿದನು.</verse>
				<verse number="24">ಮೇಲಂಗಿಯ ಅಂಚಿನ ಸುತ್ತಲೂ ನೀಲ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದ ದಾಳಿಂಬೆ ಹಣ್ಣಿನಂತೆ ಚೆಂಡುಗಳನ್ನು ಮಾಡಿದರು.</verse>
				<verse number="25">ಮತ್ತು ಚೊಕ್ಕಬಂಗಾರದಿಂದ ಗೆಜ್ಜೆಗಳನ್ನು ಮಾಡಿ ಮೇಲಂಗಿಯ ಅಂಚಿನಲ್ಲಿ ದಾಳಿಂಬೆ ಚೆಂಡುಗಳ ಸಂಗಡ ಇಟ್ಟರು.</verse>
				<verse number="26">ಚಿನ್ನದ ಗೆಜ್ಜೆಯೂ ದಾಳಿಂಬೆಯಂತಿರುವ ಚೆಂಡೂ ಒಂದಾದ ಮೇಲೆ ಒಂದು ದೇವರ ಸೇವೆಗೋಸ್ಕರವಾದ ಆ ಮೇಲಂಗಿಯ ಅಂಚಿನ ಸುತ್ತಲೂ ಇದ್ದವು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.</verse>
				<verse number="27">ಆರೋನನಿಗೂ ಅವನ ಮಕ್ಕಳಿಗೂ ಸಣ್ಣ ನಾರಿನಿಂದ ಹೆಣಿಗೆ ಕೆಲಸದ ರೀತಿಯಲ್ಲಿ ಅಂಗಿಗಳನ್ನೂ</verse>
				<verse number="28">ನಾರಿನಿಂದ ಮಹಾಯಾಜಕನ ಪೇಟವನ್ನೂ ನಾರಿನಿಂದ ಯಾಜಕರ ಅಲಂಕಾರವಾದ ಪೇಟಗಳನ್ನೂ</verse>
				<verse number="29">ಹುರಿನಾರಿನಿಂದ ಚಡ್ಡಿಗಳನ್ನೂ ಹುರಿನಾರಿನಿಂದಲೂ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದ ರೀತಿಯಲ್ಲಿ ನಡುಕಟ್ಟನ್ನೂ ಮಾಡಿದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.</verse>
				<verse number="30">ಮತ್ತು ಚೊಕ್ಕಬಂಗಾರದಿಂದ ಪರಿಶುದ್ಧ ಕಿರೀಟದಂಥ ಪಟ್ಟಿಯನ್ನು ಸರ್ವೇಶ್ವರನಿಗೆ ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ - “ಸರ್ವೇಶ್ವರನಿಗೆ ಮೀಸಲು” ಎಂಬ ಲಿಪಿಯನ್ನು ಬರೆದರು.</verse>
				<verse number="31">ಅದನ್ನು ಪೇಟಕ್ಕೆ ಬಿಗಿಸುವುದಕ್ಕಾಗಿ ನೀಲಿದಾರವನ್ನು ಅದಕ್ಕೆ ಕಟ್ಟಿದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.</verse>
				<verse number="32">ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಸಂಪೂರ್ತಿಯಾಯಿತು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಅದನ್ನು ಮಾಡಿದ್ದರು.</verse>
				<verse number="33">ಆಗ ಅವರು ಆ ಗುಡಾರವನ್ನು ಮೋಶೆಯ ಬಳಿಗೆ ತೆಗೆದುಕೊಂಡು ಬಂದರು; ಡೇರೆಯನ್ನೂ ಅದಕ್ಕೆ ಸಂಬಂಧಪಟ್ಟದ್ದೆಲ್ಲವನ್ನೂ, ಅಂದರೆ ಅದರ ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೇಕಲ್ಲುಗಳು ಇವುಗಳನ್ನೂ;</verse>
				<verse number="34">ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳಿಂದುಂಟಾದ ಮೇಲ್ಹೊದಿಕೆ, ಕಡಲುಹಂದಿಯ ತೊಗಲುಗಳಿಂದುಂಟಾದ ಮೇಲ್ಹೊದಿಕೆ, (ಮಹಾಪವಿತ್ರ ಸ್ಥಾನವನ್ನು ಮರೆಮಾಡುವ ತೆರೆ) ಇವುಗಳನ್ನೂ;</verse>
				<verse number="35">ಆಜ್ಞಾಶಾಸನಗಳ ಮಂಜೂಷ, ಅದರ ಗದ್ದಿಗೆಗಳು, ಕೃಪಾಸನ ಇವುಗಳನ್ನೂ</verse>
				<verse number="36">ಮೇಜು, ಅದರ ಉಪಕರಣಗಳು, ಕಾಣಿಕೆಯ ರೊಟ್ಟಿ ಇವುಗಳನ್ನೂ;</verse>
				<verse number="37">ಚೊಕ್ಕ ಬಂಗಾರದ ದೀಪವೃಕ್ಷ, ಅದರ ಮೇಲಿಡಬೇಕಾದ ಹಣತೆಗಳು, ಅದರ ಉಪಕರಣಗಳು, ದೀಪಕ್ಕೆ ಬೇಕಾದ ಎಣ್ಣೆ ಇವುಗಳನ್ನೂ;</verse>
				<verse number="38">ಚಿನ್ನದ ಧೂಪವೇದಿಕೆ, ಅಭಿಷೇಕತೈಲ, ಸುವಾಸನೆಯುಳ್ಳ ಧೂಪ ಇವುಗಳನ್ನೂ; ಡೇರೆಯ ಬಾಗಿಲಿನ ಪರದೆಯನ್ನೂ;</verse>
				<verse number="39">ತಾಮ್ರದ ಬಲಿಪೀಠ, ಅದರ ತಾಮ್ರದ ಜಾಳಿಗೆ, ಅದರ ನೀರಿನ ತೊಟ್ಟಿ, ಅದರ ಪೀಠ ಇವುಗಳನ್ನೂ;</verse>
				<verse number="40">ಅಂಗಳದ ತೆರೆಗಳು, ಕಂಬಗಳು, ಗದ್ದಿಗೇಕಲ್ಲುಗಳು ಇವುಗಳನ್ನೂ; ಅಂಗಳದ ಬಾಗಿಲಿನ ಪರದೆ, ಅದರ ಹಗ್ಗಗಳು, ಗೂಟಗಳು ಇವುಗಳನ್ನೂ; ದೇವದರ್ಶನದ ಗುಡಾರದ ಸೇವೆಗೆ ಬೇಕಾದ ಎಲ್ಲಾ ಉಪಕರಣಗಳನ್ನೂ;</verse>
				<verse number="41">ದೇವಮಂದಿರದೊಳಗೆ ನಡೆಯುವ ಸೇವೆಗೋಸ್ಕರ ಬೇಕಾದ ಅಲಂಕಾರವಸ್ತ್ರ, ಅಂದರೆ ಆರೋನನಿಗೆ ಬೇಕಾದ ದೀಕ್ಷಾವಸ್ತ್ರ ಯಾಜಕಸೇವೆ ಮಾಡುವವರಾದ ಅವನ ಮಕ್ಕಳಿಗೆ ಬೇಕಾದ ವಸ್ತ್ರ ಇವುಗಳನ್ನೂ ತಂದರು.</verse>
				<verse number="42">ಸರ್ವೇಶ್ವರ ಆಜ್ಞಾಪಿಸಿದಂತೆಯೇ ಇಸ್ರಯೇಲರು ಆ ಕೆಲಸವನ್ನೆಲ್ಲಾ ಮಾಡಿದ್ದರು.</verse>
				<verse number="43">ಅವರು ಮಾಡಿದ್ದ ಕೆಲಸವನ್ನು ಮೋಶೆ ಪರೀಕ್ಷಿಸಲಾಗಿ ಕರ್ತನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿ ಮುಗಿಸಿದರೆಂದು ತಿಳಿದುಕೊಂಡು ಅವರನ್ನು ಆಶೀರ್ವದಿಸಿದನು.</verse>
			</chapter>
			<chapter number="40">
				<verse number="1">ಸರ್ವೇಶ್ವರ ಸ್ವಾಮಿ ಮೋಶೆಗೆ:</verse>
				<verse number="2">“ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ನೀನು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸು.</verse>
				<verse number="3">ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ತೆರೆಯಿಂದ ಮರೆಮಾಡು.</verse>
				<verse number="4">ಆ ಮೇಲೆಮೇಜನ್ನು ತರಿಸಿ ಅದರ ಮೇಲಿಡಬೇಕಾದುದನ್ನು ಸರಿಯಾಗಿ ಇಡು. ದೀಪವೃಕ್ಷವನ್ನು ತರಿಸಿ ಅದರ ಹಣತೆಗಳನ್ನು ಸರಿಯಾಗಿಡು.</verse>
				<verse number="5">ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಕೆಯನ್ನು ಇಟ್ಟು, ಗುಡಾರದ ಬಾಗಿಲಲ್ಲಿ ಪರದೆಯನ್ನು ಕಟ್ಟು.</verse>
				<verse number="6">ದೇವದರ್ಶನದ ಗುಡಾರದ ಬಾಗಿಲಿನ ಮುಂದುಗಡೆಯಲ್ಲಿ ಬಲಿಪೀಠವನ್ನು ಇಡು.</verse>
				<verse number="7">ದೇವದರ್ಶನದ ಗುಡಾರಕ್ಕೂ ಬಲಿಪೀಠಕ್ಕೂ ನಡುವೆ ನೀರು ತೊಟ್ಟಿಯನ್ನಿಟ್ಟು ಅದರಲ್ಲಿ ನೀರನ್ನು ತುಂಬಿಸು.</verse>
				<verse number="8">ಅಂಗಳದ ಸುತ್ತಲೂ ಆವರಣವನ್ನು ನಿಲ್ಲಿಸಿ ಅಂಗಳದ ಬಾಗಿಲಿಗೆ ಪರದೆಯನ್ನು ತೂಗುಬಿಡು.</verse>
				<verse number="9">ಬಳಿಕ ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿ ಇರುವುದೆಲ್ಲವನ್ನೂ ಅದರ ಎಲ್ಲ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಾಪಿಸು. ಅಂದಿನಿಂದ ಅದು ಪರಿಶುದ್ಧವಾಗಿರುವುದು.</verse>
				<verse number="10">ಬಲಿಪೀಠವನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಬಲಿಪೀಠವನ್ನು ಪ್ರತಿಷ್ಠಾಪಿಸು. ಅದು ಪರಮಪವಿತ್ರವಾಗಿರಬೇಕು.</verse>
				<verse number="11">ನೀರು ತೊಟ್ಟಿಯನ್ನೂ ಅದರ ಪೀಠವನ್ನೂ ಅಭಿಷೇಕಿಸಿ ಪ್ರತಿಷ್ಠಾಪಿಸು.</verse>
				<verse number="12">“ಅದಲ್ಲದೆ ಆರೋನನನ್ನು ಮತ್ತು ಅವನ ಮಕ್ಕಳನ್ನು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿ ಅವರನ್ನು ಸ್ನಾನಮಾಡಿಸು.</verse>
				<verse number="13">ಆರೋನನು ನನಗೆ ಯಾಜಕನಾಗುವಂತೆ ಅವನಿಗೆ ಆ ದೀಕ್ಷಾವಸ್ತ್ರಗಳನ್ನು ತೊಡಿಸಿ ಅವನನ್ನು ಅಭಿಷೇಕಿಸಿ ಪ್ರತಿಷ್ಠಾಪಿಸು.</verse>
				<verse number="14">ಅನಂತರ ಅವನ ಮಕ್ಕಳನ್ನು ಬರಮಾಡು.</verse>
				<verse number="15">ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನು ಕೂಡ ಅಭಿಷೇಕಿಸು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು,” ಎಂದು ಹೇಳಿದರು.</verse>
				<verse number="16">ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು.</verse>
				<verse number="17">ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ಮೋಶೆ ಗುಡಾರವನ್ನು ಎತ್ತಿ ನಿಲ್ಲಿಸಿದನು.</verse>
				<verse number="18">ಅವನು ಗುಡಾರವನ್ನು ಎತ್ತಿಸಿ ಅದರ ಗದ್ದಿಗೇಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು.</verse>
				<verse number="19">ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿದನು. ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಅದೆಲ್ಲವನ್ನು ಮಾಡಿದನು.</verse>
				<verse number="20">ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಗದ್ದಿಗೆಗಳನ್ನು ಕೊಟ್ಟು ಅದರ ಮೇಲೆ ಕೃಪಾಸನವನ್ನಿಟ್ಟು,</verse>
				<verse number="21">ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ತೆರೆಯನ್ನು ಇರಿಸಿ, ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.</verse>
				<verse number="22">ಅದಲ್ಲದೆ ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ದೇವದರ್ಶನದ ಗುಡಾರದೊಳಗೆ ಉತ್ತರಕಡೆಯಲ್ಲಿ ತೆರೆಯ ಹೊರಗಡೆ ಮೇಜನ್ನು ಇಟ್ಟು</verse>
				<verse number="23">ಅದರ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲಿ ರೊಟ್ಟಿಗಳನ್ನು ಕ್ರಮವಾಗಿ ಇರಿಸಿದನು.</verse>
				<verse number="24">ಸರ್ವೇಶ್ವರ ಆಜ್ಞಾಪಿಸಿದಂತೆಯೇ ಅವನು ದೀಪವೃಕ್ಷವನ್ನು ದೇವದರ್ಶನದ ಗುಡಾರದೊಳಗೆ ಮೇಜಿನ ಎದುರಾಗಿ ಗುಡಾರದ ದಕ್ಷಿಣಕಡೆಯಲ್ಲಿ ಇಟ್ಟು</verse>
				<verse number="25">ಅದರ ಹಣತೆಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು.</verse>
				<verse number="26">ಸರ್ವೇಶ್ವರ ಆಜ್ಞಾಪಿಸಿದಂತೆ ಚಿನ್ನದ ಧೂಪವೇದಿಕೆಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಮುಂದೆ ಇಟ್ಟು</verse>
				<verse number="27">ಅದರ ಮೇಲೆ ಪರಿಮಳದ್ರವ್ಯಗಳ ಧೂಪವನ್ನು ಹಾಕಿದನು;</verse>
				<verse number="28">ಗುಡಾರದ ಬಾಗಿಲಿಗೆ ಪರದೆಯನ್ನು ಹಾಕಿದನು.</verse>
				<verse number="29">ಸರ್ವೇಶ್ವರ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಬಲಿಪೀಠವನ್ನಿಟ್ಟು ಅದರ ಮೇಲೆ ದಹನಬಲಿಯನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು.</verse>
				<verse number="30">ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ದೇವದರ್ಶನದ ಗುಡಾರಕ್ಕೂ ಬಲಿಪೀಠಕ್ಕೂ ನಡುವೆ ನೀರಿನ ತೊಟ್ಟಿಯನ್ನು ಇರಿಸಿ ಅದರಲ್ಲಿ ನೀರು ತುಂಬಿಸಿದನು.</verse>
				<verse number="31">ಅದರಲ್ಲಿ ಮೋಶೆಯೂ</verse>
				<verse number="32">ಆರೋನನೂ ಅವನ ಮಕ್ಕಳೂ ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ ಬಲಿಪೀಠದ ಸೇವೆಗೆ ಬಂದಾಗಲೂ ಕೈಕಾಲುಗಳನ್ನು ತೊಳೆದುಕೊಳ್ಳುವರು.</verse>
				<verse number="33">ಗುಡಾರ ಹಾಗು ಬಲಿಪೀಠದ ಸುತ್ತಲು ಆವರಣವನ್ನು ಎತ್ತಿ ನಿಲ್ಲಿಸಿ ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಹೀಗೆ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು.</verse>
				<verse number="34">ಆಗ ಮೇಘವೊಂದು ದೇವದರ್ಶನದ ಗುಡಾರವನ್ನು ಮುಚ್ಚಿತು; ಸರ್ವೇಶ್ವರನ ತೇಜಸ್ಸು ಗುಡಾರವನ್ನು ತುಂಬಿತು.</verse>
				<verse number="35">ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಯಾಗಿರುವುದರಿಂದಲೂ ಸರ್ವೇಶ್ವರನ ತೇಜಸ್ಸು ಗುಡಾರದೊಳಗೆ ತುಂಬಿದ್ದುದರಿಂದಲೂ ಮೋಶೆ ಗುಡಾರದಲ್ಲಿ ಹೋಗಲಾರದೆ ಇದ್ದನು.</verse>
				<verse number="36">ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಯೇಲರು ಮುಂದಕ್ಕೆ ಪ್ರಯಾಣ ಮಾಡುತ್ತಿದ್ದರು.</verse>
				<verse number="37">ಆ ಮೇಘವು ಬಿಡದೆ ಇರುವಾಗ ಅದು ಬಿಡುವ ತನಕ ಪ್ರಯಾಣಮಾಡದೆ ಇರುತ್ತಿದ್ದರು.</verse>
				<verse number="38">ಇಸ್ರಯೇಲರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣ ಮುಂದೆ ಹಗಲುಹೊತ್ತಿನಲ್ಲಿ ಸರ್ವೇಶ್ವರನ ಮೇಘವು ಗುಡಾರದ ಮೇಲೆ ಇತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಪ್ರಕಾಶಿಸುತ್ತಿತ್ತು.</verse>
			</chapter>
		</book>
		<book number="3">
			<chapter number="1">
				<verse number="1">ಸರ್ವೇಶ್ವರ ಸ್ವಾಮಿ ಮೋಶೆಯನ್ನು ಕರೆದು, ದೇವದರ್ಶನದ ಗುಡಾರದಿಂದ ಅವನ ಸಂಗಡ ಮಾತಾಡಿ, ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ತಿಳಿಸಿದರು.</verse>
				<verse number="2">“ನಿಮ್ಮಲ್ಲಿ ಯಾರಾದರೂ ಸರ್ವೇಶ್ವರನಿಗೆ ಒಂದು ಪ್ರಾಣಿಯನ್ನು ಸಮರ್ಪಿಸಲು ಆಶಿಸಿದರೆ, ಅದನ್ನು ದನಕರುಗಳಿಂದಾಗಲಿ ಆಡುಕುರಿಗಳಿಂದಾಗಲಿ ಆಯ್ದುಕೊಂಡು ಸಮರ್ಪಿಸಲಿ.</verse>
				<verse number="3">ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಸರ್ವೇಶ್ವರನಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.</verse>
				<verse number="4">ಅರ್ಪಿಸುವವನು ಆ ಪ್ರಾಣಿಯ ತಲೆಯ ಮೇಲೆ ಕೈಯಿಡಬೇಕು. ಆಗ ಅದು ಅವನ ಪಾಪಕ್ಕೆ ಪ್ರಾಯಶ್ಚಿತ್ತವಾಗಿ ಅಂಗೀಕೃತವಾಗುವುದು.</verse>
				<verse number="5">ಅವನು ಅದನ್ನು ಸರ್ವೇಶ್ವರನ ಎದುರಿನಲ್ಲಿ ವಧಿಸಬೇಕು. ಆರೋನನ ವಂಶಜರಾದ ಯಾಜಕರು ಅದರ ರಕ್ತವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಬಲಿಪೀಠದ ಸುತ್ತಲೂ ಚಿಮುಕಿಸಬೇಕು.</verse>
				<verse number="6">ಅದೂ ಅಲ್ಲದೆ ಅರ್ಪಿಸುವವನು ಆ ಪ್ರಾಣಿಯ ಚರ್ಮವನ್ನು ಸುಲಿದು ಅದರ ದೇಹವನ್ನು ತುಂಡುತುಂಡಾಗಿ ಕಡಿಯಬೇಕು.</verse>
				<verse number="7">ಆರೋನನ ವಂಶಜರಾದ ಯಾಜಕರು ಬಲಿಪೀಠದ ಮೇಲೆ ಬೆಂಕಿಯನ್ನಿಟ್ಟು</verse>
				<verse number="8">ಅದರ ಮೇಲೆ ಕಟ್ಟಿಗೆಯನ್ನು ಪೇರಿಸಬೇಕು. ಪ್ರಾಣಿಯ ಆ ತುಂಡುಗಳನ್ನೂ, ತಲೆಯನ್ನೂ, ಕೊಬ್ಬನ್ನೂ ಅದರ ಮೇಲೆ ಕ್ರಮವಾಗಿ ಇಡಬೇಕು.</verse>
				<verse number="9">ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ. ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.</verse>
				<verse number="10">“ಒಬ್ಬನು ಆಡನ್ನಾಗಲಿ, ಕುರಿಯನ್ನಾಗಲಿ ದಹನಬಲಿದಾನ ಮಾಡಬೇಕೆಂದಿದ್ದರೆ ಅಂಥವನು ಕಳಂಕರಹಿತವಾದ ಗಂಡನ್ನು ತರಲಿ.</verse>
				<verse number="11">ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಬಲಿಪೀಠದ ಉತ್ತರದ ಕಡೆ ವಧಿಸಲಿ. ತರುವಾಯ ಆರೋನನ ವಂಶಜರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಲಿ.</verse>
				<verse number="12">ಅರ್ಪಿಸುವವನು ಆ ಪ್ರಾಣಿಯ ದೇಹವನ್ನು ತುಂಡುತುಂಡಾಗಿ ಕಡಿದ ಮೇಲೆ ಯಾಜಕನು ಆ ತುಂಡುಗಳನ್ನೂ ತಲೆಯನ್ನೂ, ಕೊಬ್ಬನ್ನೂ ಬಲಿಪೀಠದ ಮೇಲಿನ ಬೆಂಕಿಯಲ್ಲಿ ಕಟ್ಟಿಗೆಯ ಮೇಲೆ ಕ್ರಮವಾಗಿ ಇಡಬೇಕು.</verse>
				<verse number="13">ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಲ್ಲಿ ತೊಳೆಸಿದ ನಂತರ ಯಾಜಕನು ಅದನ್ನು ಪೂರ್ತಿಯಾಗಿ ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.</verse>
				<verse number="14">ಸರ್ವೇಶ್ವರನಿಗೆ ದಹನಬಲಿಯಾಗಿ ಸಮರ್ಪಿಸುವಂಥದ್ದು ಪಕ್ಷಿ ಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಿರಲಿ, ಅಥವಾ ಮರಿ ಪಾರಿವಾಳ ಆಗಿರಲಿ.</verse>
				<verse number="15">ಯಾಜಕನು ಅದನ್ನು ಬಲಿಪೀಠದ ಬಳಿಗೆ ತಂದು ಕುತ್ತಿಗೆ ಮುರಿದು ಬಲಿಪೀಠದ ಮೇಲೆ ಹೋಮಮಾಡಲಿ; ಅದರ ರಕ್ತವನ್ನು ಬಲಿಪೀಠದ ಪಕ್ಕದಲ್ಲಿ ಹಿಂಡಲಿ.</verse>
				<verse number="16">ಅದರ ಕರುಳುಗಳನ್ನೂ, ಗರಿಗಳನ್ನೂ ತೆಗೆದುಬಿಟ್ಟು ಬಲಿಪೀಠದ ಪೂರ್ವದಿಕ್ಕಿನಲ್ಲಿರುವ ಬೂದಿಯ ಎಡೆಯಲ್ಲಿ ಬಿಸಾಡಲಿ.</verse>
				<verse number="17">ಯಾಜಕನು ಆ ಹಕ್ಕಿಯ ದೇಹವನ್ನು ಇಬ್ಭಾಗವಾಗಿ ಸೀಳಲಿ; ಒಂದೊಂದು ಭಾಗದಲ್ಲಿ ಒಂದು ರೆಕ್ಕೆ ಇರುವಂತೆ ಸೀಳಲಿ. ಅನಂತರ ಅದನ್ನು ಬಲಿಪೀಠದ ಮೇಲಿನ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಲಿ. ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿ.</verse>
			</chapter>
			<chapter number="2">
				<verse number="1">“ಯಾರಾದರು ಸರ್ವೇಶ್ವರ ಸ್ವಾಮಿಗೆ ಧಾನ್ಯವನ್ನು ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿ ಹಿಟ್ಟಾಗಿರಬೇಕು. ಅದರ ಮೇಲೆ ಎಣ್ಣೆಹೊಯ್ದು, ಸಾಂಬ್ರಾಣಿಯನ್ನಿಟ್ಟು, ಅದನ್ನು ಆರೋನನ ವಂಶಜರಾದ ಯಾಜಕರ ಬಳಿಗೆ ತರಬೇಕು.</verse>
				<verse number="2">ಅದು ದೇವರಿಗೆ ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಯಾಜಕನು ಆ ಎಣ್ಣೆ ಬೆರಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಹಾಗು ಇಡೀ ಸಾಂಬ್ರಾಣಿಯನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಹೋಮಮಾಡಲಿ. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನ ಬಲಿ.</verse>
				<verse number="3">ಈ ಕಾಣಿಕೆಯಲ್ಲಿ ಮಿಕ್ಕದ್ದು ಆರೋನನಿಗೂ ಅವನ ವಂಶದವರಿಗೂ ಸೇರತಕ್ಕದ್ದು. ಸರ್ವೇಶ್ವರನಿಗೆ ಸಮರ್ಪಿತವಾಗಿ ಉಳಿಯುವ ಹೋಮಶೇಷವು ಮಹಾಪರಿಶುದ್ಧವಾದುದು.</verse>
				<verse number="4">“ನೀವು ಒಲೆಯಲ್ಲಿ ಅಡಿಗೆ ಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿ ಹಿಟ್ಟಿನ ಹೋಳಿಗೆಗಳಾಗಿರಲಿ ಅಥವಾ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳಾಗಿರಲಿ.</verse>
				<verse number="5">ನೀವು ಅರ್ಪಿಸುವುದು ಕಬ್ಬಿಣದ ಹೆಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿ ಹಿಟ್ಟಿನದಾಗಿರಬೇಕು.</verse>
				<verse number="6">ಅದನ್ನು ಚೂರುಚೂರಾಗಿ ಮುರಿದು ಅದರ ಮೇಲೆ ಎಣ್ಣೆ ಹೊಯ್ದು ಕಾಣಿಕೆಯಾಗಿ ಕೊಡಬೇಕು.</verse>
				<verse number="7">ನೀವು ಅರ್ಪಿಸುವುದು ಬಾಂಡ್ಲಿಯಲ್ಲಿ ಪಕ್ವಮಾಡಿದ್ದಾದರೆ ಅದು ಎಣ್ಣೆ ಹೊಯ್ದ ಗೋದಿ ಹಿಟ್ಟಿನದಾಗಿರಬೇಕು.</verse>
				<verse number="8">ನೀವು ಈ ಮೂರು ವಿಧವಾದ ನೈವೇದ್ಯವನ್ನು ಸಮರ್ಪಿಸುವುದಾದರೆ ಅವುಗಳನ್ನು ಯಾಜಕನಿಗೆ ಒಪ್ಪಿಸಬೇಕು. ಅವನೇ ಅದನ್ನು ಬಲಿಪೀಠದ ಬಳಿಗೆ ತರಲಿ.</verse>
				<verse number="9">ಯಾಜಕನು ಅದು ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಅದರಲ್ಲಿ ಸ್ವಲ್ಪ ಭಾಗವನ್ನು ಪ್ರತ್ಯೇಕಿಸಿ ಬಲಿಪೀಠದ ಮೇಲೆ ಹೋಮಮಾಡಲಿ. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನ ಬಲಿ.</verse>
				<verse number="10">ಈ ಕಾಣಿಕೆಯಲ್ಲಿ ಮಿಕ್ಕದ್ದು ಆರೋನನಿಗೂ ಅವನ ವಂಶಜರಿಗೂ ಸೇರತಕ್ಕದ್ದು. ಸರ್ವೇಶ್ವರನಿಗೆ ಸಮರ್ಪಿತವಾಗಿ ಉಳಿಕೆಯಾದದ್ದು ಮಹಾಪರಿಶುದ್ಧವಾದುದು.</verse>
				<verse number="11">“ನೀವು ಸರ್ವೇಶ್ವರನಿಗೆ ಕಾಣಿಕೆಯಾಗಿ ಸಮರ್ಪಿಸುವ ಯಾವ ಧಾನ್ಯದ ಪದಾರ್ಥವನ್ನಾಗಲಿ ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಸಿಹಿಪದಾರ್ಥವನ್ನಾಗಲಿ ಸರ್ವೇಶ್ವರನಿಗೆ ಹೋಮಮಾಡಕೂಡದು.</verse>
				<verse number="12">ಅವುಗಳನ್ನು ಪ್ರಥಮ ಫಲವಾಗಿ ಸರ್ವೇಶ್ವರನಿಗೆ ಸಮರ್ಪಿಸಬಹುದೇ ಹೊರತು ಬಲಿಪೀಠದ ಮೇಲೆ ಸುವಾಸನೆಯನ್ನುಂಟುಮಾಡುವುದಕ್ಕಾಗಿ ಹೋಮ ಮಾಡಕೂಡದು.</verse>
				<verse number="13">ನೈವೇದ್ಯವಾಗಿ ಸಮರ್ಪಿಸುವ ಎಲ್ಲ ಆಹಾರ ಪದಾರ್ಥಗಳಿಗೂ ಉಪ್ಪು ಹಾಕಿಯೆ ಸಮರ್ಪಿಸಬೇಕು. ಉಪ್ಪು ಸರ್ವೇಶ್ವರನ ಸಂಗಡ ನಿಮಗಿರುವ ಒಡಂಬಡಿಕೆಯ ಸೂಚನೆ. ಆದ್ದರಿಂದ ಅದು ಯಾವ ನೈವೇದ್ಯ ದ್ರವ್ಯವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲ ಪದಾರ್ಥಗಳಲ್ಲಿಯೂ ಉಪ್ಪು ಸೇರಿಸಿಯೇ ಇರಬೇಕು.</verse>
				<verse number="14">“ನೀವು ಸರ್ವೇಶ್ವರನಿಗೆ ಪ್ರಥಮ ಧಾನ್ಯ ನೈವೇದ್ಯವನ್ನು ಮಾಡಬೇಕಾದರೆ ಅದು ಬೆಂಕಿಯಲ್ಲಿ ಸುಟ್ಟ ಗೋದಿಯ ಹಸಿ ತೆನೆಗಳಾಗಿರಬೇಕು.</verse>
				<verse number="15">ಅದು ನೈವೇದ್ಯ ವಸ್ತುವಾದುದರಿಂದ ಅದರ ಮೇಲೆ ಎಣ್ಣೆ ಹೊಯ್ಯಬೇಕು; ಸಾಂಬ್ರಾಣಿ ಇಡಬೇಕು.</verse>
				<verse number="16">ಯಾಜಕನು ಅದು ದೇವರಿಗೆ ಸಮರ್ಪಿತವಾದುದೆಂದು ಸೂಚಿಸುವುದಕ್ಕಾಗಿ ಆ ಗೋದಿ ತೆನೆಯಿಂದಲೂ, ಎಣ್ಣೆಯಿಂದಲೂ ಸ್ವಲ್ಪ ಭಾಗವನ್ನು ತೆಗೆದುಕೊಂಡು ಸಾಂಬ್ರಾಣಿಯನ್ನೆಲ್ಲ ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಸರ್ವೇಶ್ವರನಿಗೆ ಹೋಮಮಾಡಲಿ.</verse>
			</chapter>
			<chapter number="3">
				<verse number="1">“ಯಾರಾದರು ಶಾಂತಿಸಮಾಧಾನಕ್ಕಾಗಿ ಬಲಿದಾನ ಮಾಡಬೇಕಾದರೆ ಅಂಥವನು ಸಮರ್ಪಿಸುವ ಪ್ರಾಣಿ ದನಕರುವಾಗಿದ್ದಲ್ಲಿ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ, ಕಳಂಕರಹಿತವಾಗಿರಬೇಕು.</verse>
				<verse number="2">ಅವನು ಆ ಪ್ರಾಣಿಯನ್ನು ಸರ್ವೇಶ್ವರನ ಸನ್ನಿಧಿಗೆ ತಂದು ಅದರ ತಲೆಯ ಮೇಲೆ ಕೈಯಿಡಬೇಕು; ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಬೇಕು.</verse>
				<verse number="3">ಆ ಬಲಿಪ್ರಾಣಿಯ ಈ ಭಾಗಗಳನ್ನು, ಕರುಳ ಸುತ್ತಲಿನ ಕೊಬ್ಬನ್ನೂ, ಮೂತ್ರಪಿಂಡಗಳನ್ನೂ ಮತ್ತು ಅವುಗಳ ಮೇಲಿನ ಕೊಬ್ಬನ್ನೂ ಕಾಳಿಜದ ಉತ್ತಮ ಭಾಗವನ್ನೂ ತೆಗೆದು ಸರ್ವೇಶ್ವರನಿಗೆ ಹೋಮಮಾಡಬೇಕು.</verse>
				<verse number="4"></verse>
				<verse number="5">ಆರೋನನ ವಂಶಜರಾದ ಯಾಜಕರು ಅದನ್ನು ಬಲಿಪೀಠದಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ದಹನಬಲಿಪದಾರ್ಥಗಳೊಡನೆ ಹೋಮಮಾಡಬೇಕು. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧ ಬಲಿಯಾಗಿರುವುದು.</verse>
				<verse number="6">“ಶಾಂತಿಸಮಾಧಾನಕ್ಕಾಗಿ ಸರ್ವೇಶ್ವರನಿಗೆ ಸಮರ್ಪಿಸುವ ಬಲಿಪ್ರಾಣಿ ಕುರಿ ಅಥವಾ ಆಡು ಆಗಿದ್ದರೆ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ, ಕಳಂಕರಹಿತವಾಗಿರಬೇಕು.</verse>
				<verse number="7">“ಅದು ಕುರಿಯಾಗಿದ್ದರೆ ತಂದವನು ಅದನ್ನು ಸರ್ವೇಶ್ವರನ ಸನ್ನಿಧಿಗೆ ತೆಗೆದುಕೊಂಡು ಬಂದು ಅದರ ತಲೆಯ ಮೇಲೆ ಕೈಯಿಟ್ಟು</verse>
				<verse number="8">ದೇವದರ್ಶನದ ಗುಡಾರದ ಎದುರಿಗೆ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲು ಚಿಮುಕಿಸಬೇಕು.</verse>
				<verse number="9">ಶಾಂತಿಸಮಾಧಾನಕ್ಕಾಗಿ ಅರ್ಪಿಸುವ ಆ ಬಲಿ ಪ್ರಾಣಿಯ ಕೊಬ್ಬನ್ನು ಸರ್ವೇಶ್ವರನಿಗೆ ಹೋಮವಾಗಿ ಸಮರ್ಪಿಸಬೇಕು.</verse>
				<verse number="10">ಹೇಗೆಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನೂ ಕರುಳ ಸುತ್ತಲಿನ ಕೊಬ್ಬನ್ನೂ, ಮೂತ್ರಪಿಂಡಗಳನ್ನೂ ಅವುಗಳ ಮೇಲಿನ ಕೊಬ್ಬನ್ನೂ ಮತ್ತು ಕಾಳಿಜದ ಉತ್ತಮ ಭಾಗವನ್ನೂ</verse>
				<verse number="11">ಯಾಜಕನು ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ಸರ್ವೇಶ್ವರನಿಗೆ ದಹನಬಲಿಯ ಆಹಾರವಾಗುವುದು.</verse>
				<verse number="12">ಸಮರ್ಪಿಸುವಂಥದ್ದು ಆಡಾಗಿದ್ದರೆ ಅರ್ಪಿಸುವವನು ಅದನ್ನು ಸರ್ವೇಶ್ವರನ ಸನ್ನಿಧಿಗೆ ತೆಗೆದುಕೊಂಡು ಬರಬೇಕು.</verse>
				<verse number="13">ಅದರ ತಲೆಯ ಮೇಲೆ ಕೈಯಿಟ್ಟು ದೇವದರ್ಶನದ ಗುಡಾರದ ಎದುರಿಗೆ ವಧಿಸಬೇಕು. ಆರೋನನ ವಂಶಜರಾದ ಯಾಜಕರು ಅದರ ರಕ್ತವನ್ನು ಬಲಿಪೀಠದ ಸುತ್ತಲು ಚಿಮುಕಿಸಬೇಕು.</verse>
				<verse number="14">ಅದರ ಕರುಳ ಸುತ್ತಲಿನ ಕೊಬ್ಬನ್ನೂ, ಮೂತ್ರಪಿಂಡಗಳನ್ನೂ</verse>
				<verse number="15">ಮತ್ತು ಅವುಗಳ ಮೇಲಿನ ಕೊಬ್ಬನ್ನೂ ಕಾಳಿಜದ ಉತ್ತಮ ಭಾಗವನ್ನೂ ಸರ್ವೇಶ್ವರನಿಗೆ ಅಗ್ನಿಯ ಮೂಲಕ ಸಮರ್ಪಿಸಬೇಕು.</verse>
				<verse number="16">ಯಾಜಕನು ಅದನ್ನು ಬಲಿಪೀಠದ ಮೇಲೆ ಹೋಮಮಾಡಬೇಕು. ಅದು ಸುಗಂಧಹೋಮ ರೂಪವಾಗಿ ಸರ್ವೇಶ್ವರನಿಗೆ ಆಹಾರವಾಗಿರುವುದು. ಬಲಿಪ್ರಾಣಿಗಳ ಕೊಬ್ಬೆಲ್ಲವು ಸರ್ವೇಶ್ವರನದು.</verse>
				<verse number="17">ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನಕೂಡದೆಂಬುದು ನಿಮಗೂ ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲ ಸ್ಥಳಗಳಲ್ಲಿಯೂ ಶಾಶ್ವತ ನಿಯಮವಾಗಿದೆ.”</verse>
			</chapter>
			<chapter number="4">
				<verse number="1">ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದರು:</verse>
				<verse number="2">“ನೀನು ಇಸ್ರಯೇಲರ ಸಂಗಡ ಮಾತಾಡಿ ಹೇಳಬೇಕಾದುದು ಏನೆಂದರೆ ಯಾರೇ ಆಗಲಿ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರು ತಿಳಿಯದೆ ಮಾಡಿ ದೋಷಿಯಾದರೆ ಅದು ಆ ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಅನುಸರಿಸಬೇಕು:</verse>
				<verse number="3">“ಅಭಿಷಿಕ್ತನಾದ ಯಾಜಕನೇ ಅಂಥ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಕಳಂಕರಹಿತವಾದ ಪ್ರಾಯದ ಹೋರಿಯೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು.</verse>
				<verse number="4">ಅವನು ಆ ಹೋರಿಯನ್ನು ಸರ್ವೇಶ್ವರನ ಸನ್ನಿಧಿಗೆ, ದೇವದರ್ಶನದ ಗುಡಾರದ ಬಾಗಿಲಿಗೆ, ತಂದು ಅದರ ತಲೆಯ ಮೇಲೆ ಕೈಯಿಟ್ಟು ಸರ್ವೇಶ್ವರನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.</verse>
				<verse number="5">ಅಭಿಷಿಕ್ತ ಯಾಜಕನು ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವದರ್ಶನದ ಗುಡಾರದೊಳಗೆ ಬರಬೇಕು;</verse>
				<verse number="6">ಆ ರಕ್ತದಲ್ಲಿ ಬೆರಳನ್ನು ಅದ್ದಿ ಮಹಾಪವಿತ್ರ ಸ್ಥಾನದ ಮುಂದಿನ ತೆರೆಯ ಎದುರಿಗೆ, ಸರ್ವೇಶ್ವರನ ಸನ್ನಿಧಿಯಲ್ಲಿ ಏಳು ಸಾರಿ ಚಿಮುಕಿಸಬೇಕು.</verse>
				<verse number="7">ಬಳಿಕ ಯಾಜಕನು ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ಪರಿಮಳ ಧೂಪವೇದಿಕೆಯ ಕೊಂಬುಗಳಿಗೆ ಆ ರಕ್ತವನ್ನು ಹೆಚ್ಚಿ ಹೋರಿಯ ಮಿಕ್ಕ ರಕ್ತವನ್ನೆಲ್ಲ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ದಹನಬಲಿ ಕೊಡುವ ಬಲಿಪೀಠದ ಬುಡದಲ್ಲಿ ಸುರಿಯಬೇಕು.</verse>
				<verse number="8">ಆ ದೋಷಪರಿಹಾರಕ ಬಲಿಹೋರಿಯ ಕೊಬ್ಬನ್ನೆಲ್ಲಾ, ಅಂದರೆ ಕರುಳ ಸುತ್ತಲಿನ ಕೊಬ್ಬನ್ನೂ</verse>
				<verse number="9">ಮೂತ್ರಪಿಂಡಗಳನ್ನೂ ಅವುಗಳ ಮೇಲಿನ ಕೊಬ್ಬನ್ನೂ ಕಾಳಿಜದ ಉತ್ತಮಭಾಗವನ್ನು</verse>
				<verse number="10">ಶಾಂತಿಸಮಾಧಾನದ ಬಲಿಪ್ರಾಣಿಯಲ್ಲಿ ಪ್ರತ್ಯೇಕಿಸಿದಂತೆಯೇ ಇದರಲ್ಲೂ ಪ್ರತ್ಯೇಕಿಸಿ, ದಹನಬಲಿಪೀಠದ ಮೇಲೆ ಹೋಮಮಾಡಬೇಕು.</verse>
				<verse number="11">ಆ ಹೋರಿಯಲ್ಲಿ ಮಿಕ್ಕದ್ದನ್ನೆಲ್ಲಾ, ಅಂದರೆ ಅದರ ಚರ್ಮ, ಮಾಂಸ, ತಲೆ, ಕಾಲುಗಳು, ಕರುಳುಗಳು</verse>
				<verse number="12">ಹಾಗು ಕರುಳುಗಳಲ್ಲಿರುವ ಕಲ್ಮಶ ಇವುಗಳನ್ನೆಲ್ಲ ಪಾಳೆಯದ ಹೊರಗೆ, ವೇದಿಕೆಯ ಬೂದಿಯನ್ನು ಹಾಕುವ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಿ, ಕಟ್ಟಿಗೆಯ ಮೇಲಿರಿಸಿ, ಬೆಂಕಿಯಲ್ಲಿ ಸುಡಿಸಿಬಿಡಬೇಕು. ಬೂದಿಯನ್ನು ಹಾಕುವ ಸ್ಥಳದಲ್ಲೇ ಅದನ್ನು ಸುಡಿಸಿಬಿಡಬೇಕು.</verse>
				<verse number="13">“ಇಸ್ರಯೇಲರ ಸಮಾಜವೆಲ್ಲ ತಿಳಿಯದೆ ದೋಷಿಗಳಾದರೆ, ಅಂದರೆ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರು ಮಾಡಿ ದೋಷಕ್ಕೆ ಗುರಿಯಾದರೆ,</verse>
				<verse number="14">ಮೊದಲು ತಮಗೂ ಮರೆಯಾಗಿದ್ದ ಆ ದೋಷವು ತಿಳಿದುಬಂದ ನಂತರ ಅದನ್ನು ಪರಿಹರಿಸಿಕೊಳ್ಳುವುದಕ್ಕಾಗಿ ಹೋರಿಯೊಂದನ್ನು ಸಮರ್ಪಿಸಬೇಕು. ಆ ಹೋರಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತರಿಸಿದಾಗ ಸಮಾಜದ ಹಿರಿಯರು</verse>
				<verse number="15">ಸರ್ವೇಶ್ವರನ ಸನ್ನಿಧಿಯಲ್ಲಿ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ಅದನ್ನು ವಧಿಸಬೇಕು.</verse>
				<verse number="16">ಅಭಿಷಿಕ್ತ ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ತಂದು</verse>
				<verse number="17">ಅದರಲ್ಲಿ ಬೆರಳನ್ನು ಅದ್ದಿ ತೆರೆಯ ಮುಂದೆ ಸರ್ವೇಶ್ವರನ ಸನ್ನಿಧಿಯಲ್ಲಿ ಅದನ್ನು ಏಳು ಸಾರಿ ಚಿಮುಕಿಸಬೇಕು.</verse>
				<verse number="18">ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ಧೂಪವೇದಿಕೆಯ ಕೊಂಬುಗಳಿಗೆ ಹಚ್ಚಬೇಕು.</verse>
				<verse number="19">ಮಿಕ್ಕದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಬಲಿಪೀಠದ ಬುಡದಲ್ಲಿ ಸುರಿದುಬಿಡಬೇಕು.</verse>
				<verse number="20">ಅಭಿಷಿಕ್ತ ಯಾಜಕನು ದೋಷಪರಿಹಾರಕ ಹೋರಿಯ ವಿಷಯದಲ್ಲಿ ಹೇಗೆ ಮಾಡಬೇಕೆಂದು ವಿಧಿಸಲಾಯಿತೋ ಹಾಗೆಯೆ ಇದರ ವಿಷಯದಲ್ಲೂ ಮಾಡಬೇಕು. ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದ ನಂತರ ಅವರಿಗೆ ಕ್ಷಮಾಪಣೆಯಾಗುವುದು.</verse>
				<verse number="21">ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟಂತೆಯೇ ಈ ಹೋರಿಯನ್ನೂ ಸುಡಿಸಿಬಿಡಬೇಕು. ಇದು ಜನಸಮಾಜದ ದೋಷಪರಿಹಾರಕ ಬಲಿ.</verse>
				<verse number="22">“ಮುಖ್ಯಾಧಿಕಾರಿಯೊಬ್ಬನು ತನ್ನ ದೇವರಾದ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ</verse>
				<verse number="23">ತನ್ನ ತಪ್ಪು ತನಗೆ ತಿಳಿದು ಬಂದಾಗ ಅವನು ಕಳಂಕರಹಿತವಾದ ಒಂದು ಹೋತವನ್ನು ತಂದು ಸಮರ್ಪಿಸಬೇಕು.</verse>
				<verse number="24">ಅವನು ಆ ಹೋತದ ತಲೆಯ ಮೇಲೆ ಕೈಯಿಟ್ಟು ಸರ್ವೇಶ್ವರನ ಸನ್ನಿಧಿಯಲ್ಲಿ, ದಹನ ಬಲಿಪ್ರಾಣಿಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು. ಅದು ದೋಷಪರಿಹಾರಕ ಬಲಿ.</verse>
				<verse number="25">ಯಾಜಕನು ಆ ಪ್ರಾಣಿಯ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಬಲಿಪೀಠದ ಕೊಂಬುಗಳಿಗೆ ಹಚ್ಚಿ, ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಸುರಿದುಬಿಡಬೇಕು.</verse>
				<verse number="26">ಶಾಂತಿಸಮಾಧಾನದ ಬಲಿಪ್ರಾಣಿಯ ಕೊಬ್ಬನ್ನು ಅವನು ಹೋಮಮಾಡುವ ಪ್ರಕಾರವೇ ಇದರ ಎಲ್ಲ ಕೊಬ್ಬನ್ನೂ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.</verse>
				<verse number="27">ನಿಮ್ಮ ನಾಡಿನವರಲ್ಲಿ ಬೇರೆ ಯಾರಾದರು ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ</verse>
				<verse number="28">ತನ್ನ ತಪ್ಪು ತನಗೆ ತಿಳಿದು ಬಂದಾಗ ದೋಷಪರಿಹಾರಕ್ಕಾಗಿ ಕಳಂಕರಹಿತವಾದ ಒಂದು ಹೆಣ್ಣು ಮೇಕೆಯನ್ನು ತಂದು ಸಮರ್ಪಿಸಬೇಕು.</verse>
				<verse number="29">ಅವನು ಅದರ ತಲೆಯ ಮೇಲೆ ಕೈಯಿಟ್ಟು ನಂತರ ದಹನ ಬಲಿಪ್ರಾಣಿಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ವಧಿಸಬೇಕು.</verse>
				<verse number="30">ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಬಲಿಪೀಠದ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಬಲಿಪೀಠದ ಬುಡದಲ್ಲಿ ಸುರಿದುಬಿಡಲಿ.</verse>
				<verse number="31">ಶಾತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸುವಾಸನೆಯನ್ನುಂಟುಮಾಡಲು ಬಲಿಪೀಠದ ಮೇಲೆ ಹೋಮಮಾಡಲಿ. ಹೀಗೆ ಯಾಜಕನು ಅವನಿಗೋ‍ಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.</verse>
				<verse number="32">ಅವನು ತನ್ನ ದೋಷಪರಿಹಾರಾರ್ಥವಾಗಿ ತರುವುದು ಒಂದು ಕುರಿಯಾದರೆ ಅದು ಕಳಂಕರಹಿತವಾದ ಹೆಣ್ಣಾಗಿರಬೇಕು.</verse>
				<verse number="33">ಅವನು ಅದರ ತಲೆಯ ಮೇಲೆ ಕೈಯಿಟ್ಟನಂತರ ದಹನ ಬಲಿಪ್ರಾಣಿಗಳನ್ನು ವಧಿಸುವ ಸ್ಥಳದಲ್ಲೇ ಅದನ್ನು ದೋಷಪರಿಹಾರಾರ್ಥವಾಗಿ ವಧಿಸಬೇಕು.</verse>
				<verse number="34">ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಬಲಿಪೀಠದ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಬಲಿಪೀಠದ ಬುಡದಲ್ಲಿ ಸುರಿದುಬಿಡಲಿ.</verse>
				<verse number="35">ಶಾಂತಿಸಮಾಧಾನದ ಬಲಿಪ್ರಾಣಿಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲ ಕೊಬ್ಬನ್ನು ಪ್ರತ್ಯೇಕಿಸಿ ಬಲಿಪೀಠದಲ್ಲಿ ಉರಿಯುವ ಹೋಮದ್ರವ್ಯಗಳ ಮೇಲೆ ಸರ್ವೇಶ್ವರನಿಗೆ ಹೋಮಮಾಡಲಿ. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರ ಮಾಡುವುದರಿಂದ ಅವನಿಗೆ ಕ್ಷಮೆ ದೊರಕುವುದು.</verse>
			</chapter>
			<chapter number="5">
				<verse number="1">“ಈ ಕೆಳಕಂಡ ಸಂದರ್ಭಗಳಲ್ಲಿ ಪಾಪಪರಿಹಾರಕ ಬಲಿಗಳನ್ನು ಒಪ್ಪಿಸಬೇಕಾಗುತ್ತದೆ: ಒಬ್ಬನು ತಾನು ಕಂಡು ಕೇಳಿದ್ದಕ್ಕೆ ನ್ಯಾಯಸ್ಥಾನದಲ್ಲಿ ಸಾಕ್ಷಿಹೇಳಬೇಕೆಂದು ಅಧಿಕೃತವಾದ ಕರೆಯಿದ್ದರೂ ಸಾಕ್ಷಿ ಹೇಳದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.</verse>
				<verse number="2">“ಒಬ್ಬನಿಗೆ ಅಶುದ್ಧವಾದ ಕಾಡುಮೃಗ, ಪಶು, ಜಂತು ಇವುಗಳ ಹೆಣವಾಗಲಿ, ಬೇರೆ ಯಾವ ಅಶುದ್ಧ ವಸ್ತುವಾಗಲಿ ತಗಲಿದರೆ, ಅವನಿಗೆ ತಿಳಿಯದೆ ಹೋದರೂ, ಅವನು ಅಶುದ್ಧನೂ ದೋಷಿಯೂ ಆಗುತ್ತಾನೆ.</verse>
				<verse number="3">“ಮನುಷ್ಯ ದೇಹದಿಂದುಂಟಾದ ಯಾವುದಾದರು ಒಂದು ಅಶುದ್ಧ ವಸ್ತು ತಗುಲಿದ್ದು, ಅವನಿಗೆ ತಿಳಿಯದೆ ಹೋದರೂ, ತಿಳಿದು ಬಂದಾಗ ಅವನು ದೋಷಿಯಾಗುತ್ತಾನೆ.</verse>
				<verse number="4">“ಯಾರಾದರು ಆಲೋಚಿಸದೆ ಒಳಿತಿಗಾಗಲಿ, ಕೇಡಿಗಾಗಲಿ ಏನಾದರು ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆಹೋದರೂ, ತಿಳಿದು ಬಂದಾಗ ಅವನು ಇದರಿಂದಲೂ ದೋಷಿಯಾಗುತ್ತಾನೆ.</verse>
				<verse number="5">“ಈ ವಿಷಯಗಳಲ್ಲಿ ಯಾರಾದರು ದೋಷಿಯಾದಾಗ ತಾನು ಮಾಡಿದ ತಪ್ಪನ್ನು ಒಪ್ಪಿಕೊಳ್ಳಬೇಕು.</verse>
				<verse number="6">ಇಂಥ ದೋಷದ ಪ್ರಾಯಶ್ಚಿತ್ತಕ್ಕಾಗಿ ಒಂದು ಹೆಣ್ಣು ಕುರಿಯನ್ನಾಗಲಿ, ಒಂದು ಮೇಕೆಯನ್ನಾಗಲಿ ಸರ್ವೇಶ್ವರನಿಗೆ ಸಮರ್ಪಿಸಬೇಕು. ಯಾಜಕನು ಅವನಿಗೋಸ್ಕರ ದೋಷಪರಿಹಾರ ಮಾಡುವನು.</verse>
				<verse number="7">“ಆಡು ಕುರಿಯನ್ನು ಕೊಡಲು ಅವನಿಂದ ಆಗದಿದ್ದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ಬಂದು ದಹನ ಬಲಿಯಾಗಿ ಒಂದನ್ನೂ ದೋಷಪರಿಹಾರಕ ಬಲಿಯಾಗಿ ಮತ್ತೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಲಿ.</verse>
				<verse number="8">ಅವನು ಅವುಗಳನ್ನು ಯಾಜಕನ ಬಳಿಗೆ ತಂದಾಗ ಯಾಜಕನು ಮೊದಲು ದೋಷಪರಿಹಾರಾರ್ಥಕವಾದದ್ದನ್ನು ಸಮರ್ಪಿಸಬೇಕು. ಅವನು ಅದರ ಕುತ್ತಿಗೆ ಮುರಿಯಬೇಕು. ಅದರ ತಲೆಯನ್ನು ಪೂರಾ ತೆಗೆದುಬಿಡಬಾರದು.</verse>
				<verse number="9">ಬಳಿಕ ದೋಷಪರಿಹಾರಾರ್ಥಕವಾದ ಆ ಹಕ್ಕಿಯ ರಕ್ತದಲ್ಲಿ ಸ್ವಲ್ಪವನ್ನು ಬಲಿಪೀಠದ ಬುಡದಲ್ಲಿ ಹಿಂಡಬೇಕು. ಅದು ದೋಷಪರಿಹಾರ ಬಲಿ.</verse>
				<verse number="10">ಮತ್ತೊಂದನ್ನು ವಿಧಿಯಾನುಸಾರ ದಹನಬಲಿ ಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮೆ ದೊರಕುವುದು.</verse>
				<verse number="11">“ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಮರಿ ಪಾರಿವಾಳಗಳನ್ನಾಗಲಿ ಕೊಡಲು ಅವನಿಂದ ಆಗದೆ ಹೋದಲ್ಲಿ ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿ ಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾದ್ದರಿಂದ ಅದರ ಮೇಲೆ ಎಣ್ಣೆ ಹೊಯ್ಯಕೂಡದು, ಸಾಂಬ್ರಾಣಿಯನ್ನು ಇಡಕೂಡದು.</verse>
				<verse number="12">ಅವನು ಯಾಜಕನ ಬಳಿಗೆ ಅದನ್ನು ತಂದ ನಂತರ ಅದು ದೇವಾರ್ಪಿತವೆಂದು ಸೂಚಿಸುವುದಕ್ಕಾಗಿ ಯಾಜಕನು ಅದರಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಸರ್ವೇಶ್ವರನಿಗೆ ಸಮರ್ಪಿಸಿದ ಹೋಮದ್ರವ್ಯಗಳ ಮೇಲೆ ಬಲಿಪೀಠದಲ್ಲಿ ಹೋಮಮಾಡಬೇಕು. ಅದು ದೋಷಪರಿಹಾರಕ ಬಲಿ.</verse>
				<verse number="13">ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದ ನಂತರ ಅವನಿಗೆ ಕ್ಷಮೆ ದೊರಕುವುದು. ನೈವೇದ್ಯ ದ್ರವ್ಯಗಳಲ್ಲಿ ಮಿಕ್ಕದ್ದು ಹೇಗೆ ಯಾಜಕನಿಗೆ ಸೇರತಕ್ಕದ್ದೋ ಹಾಗೆಯೆ ಇದರಲ್ಲಿಯೂ ಮಿಕ್ಕದ್ದು ಯಾಜಕನಿಗೆ ಸೇರತಕ್ಕದ್ದು.”</verse>
				<verse number="14">ಮೋಶೆಗೆ ಸರ್ವೇಶ್ವರ ಹೀಗೆಂದರು:</verse>
				<verse number="15">“ಯಾರಾದರು ಸರ್ವೇಶ್ವರನಿಗೆ ಸಲ್ಲಿಸಬೇಕಾದ ಪವಿತ್ರವಸ್ತುಗಳನ್ನು ಸಮರ್ಪಿಸುವುದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ, ಅಂಥವರು ಆ ಅಪರಾಧಕ್ಕೆ ಪರಿಹಾರ ಮಾಡಬೇಕು; ದೇವರ ಸೇವೆಗೆ ನೇಮಕವಾದ ನಾಣ್ಯದ ಮೇರೆಗೆ ಎರಡು ಅಥವಾ ಹೆಚ್ಚು ನಾಣ್ಯ ಬೆಲೆ ಬಾಳುವುದೆಂದು ತೋರುವ ಕಳಂಕರಹಿತವಾದ ಒಂದು ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಸರ್ವೇಶ್ವರನಿಗೆ ಸಮರ್ಪಿಸಬೇಕು.</verse>
				<verse number="16">ತಾವು ಅನ್ಯಾಯವಾಗಿ ಇಟ್ಟುಕೊಂಡಿರುವ ದೇವವಸ್ತುಗಳನ್ನು ಮಾತ್ರವಲ್ಲದೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಯಾಜಕನಿಗೆ ತಂದುಕೊಡಬೇಕು. ಅವನು ಪರಿಹಾರಾರ್ಥವಾಗಿ ತಂದ ಟಗರಿನಿಂದ ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಿದಾಗ ಅವರಿಗೆ ಕ್ಷಮೆ ದೊರಕುವುದು.</verse>
				<verse number="17">“ನಿಮ್ಮಲ್ಲಿ ಯಾರಾದರು ಸರ್ವೇಶ್ವರನು ವಿಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರು ಮಾಡಿ ದೋಷಕ್ಕೆ ಒಳಗಾದರೆ, ಅದು ಅವರಿಗೆ ತಿಳಿಯದೆ ಹೋದರೂ, ಅವರು ಅದರಿಂದ ಅಪರಾಧಿಯಾಗಿ ತಮ್ಮ ಪಾಪಫಲವನ್ನು ಅನುಭವಿಸಬೇಕು.</verse>
				<verse number="18">ಅಂಥವರು ಪರಿಹಾರಕ್ಕಾಗಿ ಹಿಂಡಿನಿಂದ ಕಳಂಕರಹಿತವಾದ ಟಗರೊಂದನ್ನು ಅಥವಾ ಅದಕ್ಕೆ ಸರಿಸಮಾನವಾದುದನ್ನು ಯಾಜಕನ ಬಳಿಗೆ ತೆಗೆದುಕೊಂಡು ಬರಬೇಕು. ಅವರು ತಿಳಿಯದೆ ಮಾಡಿದ ತಪ್ಪನ್ನು ಪರಿಹರಿಸುವುದಕ್ಕಾಗಿ ಯಾಜಕನು ಅವರಿಗೋಸ್ಕರ ದೋಷಪರಿಹಾರ ಮಾಡಬೇಕು. ಆಗ ಅವರಿಗೆ ಕ್ಷಮೆ ದೊರಕುವುದು.</verse>
				<verse number="19">ಅವರು ಅಪರಾಧಿಗಳಾದುದರಿಂದ ಸರ್ವೇಶ್ವರನ ಸನ್ನಿಧಿಯಲ್ಲಿ ಈ ಪರಿಹಾರ ಬಲಿಯನ್ನು ಅರ್ಪಿಸಬೇಕು.</verse>
			</chapter>
			<chapter number="6">
				<verse number="1">ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದರು:</verse>
				<verse number="2">“ನಿಮ್ಮಲ್ಲಿ ಯಾರಾದರು ಮತ್ತೊಬ್ಬನಿಂದ ತಮ್ಮ ವಶಕ್ಕೆ ಕೊಡಲಾದ ವಸ್ತುವಿನ ವಿಷಯದಲ್ಲಾಗಲಿ, ತಮ್ಮ ಬಳಿಯಲ್ಲಿ ಇಡಲಾದ ಅಡವಿನ ವಿಷಯದಲ್ಲಾಗಲಿ, ತಾನು ಮಾಡಿದ ಕಳವಿನ ವಿಷಯದಲ್ಲಾಗಲಿ, ಸುಳ್ಳಾಡಿಯೋ, ಮತ್ತೊಬ್ಬನನ್ನು ಮೋಸಗೊಳಿಸಿಯೋ</verse>
				<verse number="3">ಮತ್ತೊಬ್ಬನು ಕಳೆದುಕೊಂಡದ್ದನ್ನು ತಾವು ಕಂಡು ಬೊಂಕಿಯೋ, ಸುಳ್ಳಾಣೆಯಿಟ್ಟೋ ಅವುಗಳನ್ನು ಹಿಂದಿರುಗಿಸದೆ ತಮ್ಮಲ್ಲೇ ಇಟ್ಟುಕೊಂಡರೆ, ಇಂಥ ವಿಷಯಗಳಲ್ಲಿ ಪಾಪಮಾಡಿ, ಸರ್ವೇಶ್ವರನಿಗೆ ದ್ರೋಹಿಗಳಾಗಿ ದೋಷಕ್ಕೆ ಒಳಗಾಗುತ್ತಾರೆ.</verse>
				<verse number="4">ಅಂಥವರು ಆಯಾ ವಸ್ತುಗಳನ್ನು, ಅಂದರೆ ಕದ್ದದ್ದನ್ನು, ಮೋಸದಿಂದ ಪಡೆದದ್ದನ್ನು, ತಮ್ಮ ವಶಕ್ಕೆ ತೆಗೆದುಕೊಂಡದ್ದನ್ನು ಪೂರ್ತಿಯಾಗಿ ಹಿಂದಕ್ಕೆ ತಂದುಕೊಡಬೇಕು. ಅದೂ ಅಲ್ಲದೆ, ಐದನೆಯ ಒಂದು ಪಾಲನ್ನು ಹೆಚ್ಚಾಗಿ ಸೇರಿಸಿಕೊಡಬೇಕು. ಅವರು ಪರಿಹಾರ ಮಾಡುವ ದಿನದಲ್ಲೆ ಅದನ್ನು ಅದರ ನಿಜವಾದ ಒಡೆಯನಿಗೆ ಹಿಂದಕ್ಕೆ ಕೊಡಬೇಕು.</verse>
				<verse number="5"></verse>
				<verse number="6">ಅವರು ಪರಿಹಾರಕ್ಕಾಗಿ, ತಮ್ಮ ಹಿಂಡಿನಿಂದ ಕಳಂಕರಹಿತವಾದ ಒಂದು ಟಗರನ್ನು ಅಥವಾ ಅದಕ್ಕೆ ಸರಿಸಮಾನವಾದುದ್ದನ್ನು ತಂದು ಯಾಜಕನಿಗೆ ಒಪ್ಪಿಸಬೇಕು.</verse>
				<verse number="7">ಯಾಜಕನು ಅವರಿಗೋಸ್ಕರ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವರು ಯಾವ ವಿಷಯದಲ್ಲಿ ಅಪರಾಧಕ್ಕೆ ಒಳಗಾದರೋ ಆ ವಿಷಯದಲ್ಲಿ ಅವರಿಗೆ ಕ್ಷಮೆ ದೊರಕುವುದು.”</verse>
				<verse number="8">ಮೋಶೆಗೆ ಸರ್ವೇಶ್ವರ ಹೀಗೆಂದರು:</verse>
				<verse number="9">“ನೀನು ಆರೋನನಿಗೂ ಅವನ ವಂಶದವರಿಗೂ ಈ ಕೆಳಕಂಡ ದಹನ ಬಲಿಯ ಈ ನಿಯಮಗಳನ್ನು ಆಜ್ಞಾಪಿಸು: ದಹನ ಬಲಿ ದ್ರವ್ಯವು ರಾತ್ರಿಯೆಲ್ಲಾ, ಮರುದಿನದ ಬೆಳಗಿನವರೆಗೂ ಬಲಿಪೀಠದ ಮೇಲೆ ಉರಿಯುತ್ತಿರಬೇಕು. ಅದರಿಂದಲೇ ಬಲಿಪೀಠದ ಮೇಲಿನ ಬೆಂಕಿ ಹೊತ್ತಿ ಉರಿಯುತ್ತಿರಬೇಕು.</verse>
				<verse number="10">ಯಾಜಕನು ನಾರುಮಡಿಯ ನಿಲುವಂಗಿಯನ್ನು ಧರಿಸಿಕೊಂಡು, ಮಾನರಕ್ಷಕವಾದ ನಾರುಮಡಿ ಚಡ್ಡಿಯನ್ನು ಹಾಕಿಕೊಂಡು ಬಲಿಪೀಠದ ಮೇಲಿನ ದಹನಬಲಿ ದ್ರವ್ಯದ ಬೂದಿಯನ್ನು ಎತ್ತಿ ವೇದಿಕೆಯ ಬಳಿ ಇಡಬೇಕು.</verse>
				<verse number="11">ಅನಂತರ ತನ್ನ ವಸ್ತ್ರಗಳನ್ನು ಬದಲಾಯಿಸಿಕೊಂಡು ಆ ಬೂದಿಯನ್ನು ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.</verse>
				<verse number="12">ಬಲಿಪೀಠದ ಮೇಲಿನ ಬೆಂಕಿ ದಹನಬಲಿ ದ್ರವ್ಯದಿಂದ ಉರಿಯುತ್ತಲೇ ಇರಬೇಕು. ಅದು ಆರಿಹೋಗಬಾರದು. ಪ್ರತೀ ದಿನ ಬೆಳಿಗ್ಗೆ ಯಾಜಕನು ಕಟ್ಟಿಗೆಯನ್ನು ತಂದುಹಾಕಿ ಉರಿಸಿ, ಅದರ ಮೇಲೆ ದಹನ ದ್ರವ್ಯವನ್ನು ಕ್ರಮಪಡಿಸಿ, ಶಾಂತಿಸಮಾಧಾನ ಬಲಿಪ್ರಾಣಿಗಳ ಕೊಬ್ಬನ್ನು ಅದರ ಮೇಲೆ ಹೋಮಮಾಡಬೇಕು.</verse>
				<verse number="13">ಬಲಿಪೀಠದ ಮೇಲೆ ಬೆಂಕಿ ಯಾವಾಗಲೂ ಉರಿಯುತ್ತಿರಬೇಕು, ಆರಿಹೋಗಬಾರದು.</verse>
				<verse number="14">“ಧಾನ್ಯನೈವೇದ್ಯದ ಬಗ್ಗೆ ನಿಯಮಗಳಿವು: ಆರೋನನ ವಂಶಜರು ನೈವೇದ್ಯ ದ್ರವ್ಯವನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಬಲಿಪೀಠದ ಎದುರಿಗೇ ಸಮರ್ಪಿಸಬೇಕು.</verse>
				<verse number="15">ಅವರಲ್ಲಿ ಒಬ್ಬನು ನೈವೇದ್ಯವಾದುದನ್ನು ಸೂಚಿಸುವುದಕ್ಕಾಗಿ ಎಣ್ಣೆ ಹೊಯ್ದ ಹಿಟ್ಟಿನಲ್ಲಿ ಒಂದು ಹಿಡಿಯನ್ನೂ ಅದರ ಮೇಲಿರುವ ಸಾಂಬ್ರಾಣಿಯೆಲ್ಲವನ್ನೂ ತೆಗೆದುಕೊಂಡು ಬಲಿಪೀಠದ ಮೇಲೆ ಹೋಮಮಾಡಿ ಸರ್ವೇಶ್ವರನಿಗೆ ಸುವಾಸನೆಯನ್ನುಂಟು ಮಾಡಬೇಕು.</verse>
				<verse number="16">ಮಿಕ್ಕದ್ದನ್ನು ಆರೋನನೂ ಅವನ ವಂಶಜರೂ ತಿನ್ನಬಹುದು. ಅವರು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದೊಳಗೆ, ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.</verse>
				<verse number="17">ಸರ್ವೇಶ್ವರನಿಗೆ ಹೋಮ ರೂಪವಾಗಿ ಸಮರ್ಪಿಸಿದ ದ್ರವ್ಯಗಳಲ್ಲಿ ಅದನ್ನು ಅವರ ಪಾಲಿಗೆ ಬಿಡಲಾಗಿದೆ. ಅದಕ್ಕೆ ಹುಳಿ ಕಲಸಿ ಸುಡಕೂಡದು. ದೋಷಪರಿಹಾರಕ ಬಲಿಯಂತೆ ಹಾಗು ಪ್ರಾಯಶ್ಚಿತ್ತ ಬಲಿದ್ರವ್ಯದಂತೆ ಅದು ಸಹ ಮಹಾಪರಿಶುದ್ಧವಾದುದು.</verse>
				<verse number="18">ಆರೋನನ ವಂಶಜರಾದ ಗಂಡಸರೆಲ್ಲರು ಅದನ್ನು ತಿನ್ನಬಹುದು. ಸರ್ವೇಶ್ವರನಿಗೆ ಹೋಮವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಅದು ಶಾಶ್ವತ ನಿಯಮವಾಗಿ ಆರೋನನ ಸಂತತಿಗೆ ಸಲ್ಲತಕ್ಕದು. ಆ ದ್ರವ್ಯಗಳಿಗೆ ಸೋಂಕಿದೆಲ್ಲವೂ ಪರಿಶುದ್ಧವಾಗುವುದು.</verse>
				<verse number="19">ಮೋಶೆಗೆ ಸರ್ವೇಶ್ವರ ಹೀಗೆಂದು ತಿಳಿಸಿದರು:</verse>
				<verse number="20">“ಆರೋನನಿಗೆ ಅಭಿಷೇಕವಾದ ದಿನ ಮೊದಲ್ಗೊಂಡು ಅವನೂ ಅವನ ವಂಶಜರೂ ಸರ್ವೇಶ್ವರನಿಗೆ ಸಮರ್ಪಿಸಬೇಕಾದ ಧಾನ್ಯನೈವೇದ್ಯದ ಕ್ರಮ ಇದು: ಅವರು ದಿನನಿತ್ಯವೂ ಮೂರು ಸೇರು ಗೋದಿಹಿಟ್ಟನ್ನು, ಬೆಳಿಗ್ಗೆ ಅರ್ಧ, ಸಂಜೆ ಅರ್ಧ, ಸಮರ್ಪಿಸಬೇಕು.</verse>
				<verse number="21">ಕಬ್ಬಿಣದ ಹೆಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನೆದೇ ಇರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಸರ್ವೇಶ್ವರನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.</verse>
				<verse number="22">ಆರೋನನ ಸಂತತಿಯವರಲ್ಲಿ ಯಾವನು ಅವನ ತರುವಾಯ ಅಭಿಷಿಕ್ತ ಯಾಜಕಪಟ್ಟಕ್ಕೆ ಬರುತ್ತಾನೋ ಅವನೇ ಅದನ್ನು ಸಮರ್ಪಿಸಬೇಕು. ಇದು ಶಾಶ್ವತ ನಿಯಮ.</verse>
				<verse number="23">“ಯಾಜಕರು ತಮಗೋಸ್ಕರ ಸಮರ್ಪಿಸುವ ನೈವೇದ್ಯ ದ್ರವ್ಯಗಳನ್ನು ನಿಶ್ಯೇಷವಾಗಿ ಹೋಮಮಾಡಿ ಬಿಡಬೇಕು; ಅದನ್ನು ತಿನ್ನಲೇಕೂಡದು.”</verse>
				<verse number="24">ಮೋಶೆಗೆ ಸರ್ವೇಶ್ವರ ಹೀಗೆಂದರು:</verse>
				<verse number="25">“ನೀನು ಆರೋನನಿಗೂ ಅವನ ವಂಶಜರಿಗೂ ದೋಷಪರಿಹಾರಕ ಬಲಿ ನಿಯಮಗಳ ಬಗ್ಗೆ ಹೀಗೆ ಆಜ್ಞಾಪಿಸು: ದಹನ ಬಲಿಪ್ರಾಣಿಯನ್ನು ವಧಿಸುವ ಸ್ಥಳದಲ್ಲೇ ದೋಷಪರಿಹಾರಕ ಬಲಿಪ್ರಾಣಿಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ವಧಿಸಬೇಕು.</verse>
				<verse number="26">ಅದು ಮಹಾಪರಿಶುದ್ಧವಾದ್ದರಿಂದ ಸಮರ್ಪಿಸುವ ಯಾಜಕನು ಅದರ ಮಾಂಸವನ್ನು ಊಟಮಾಡಬೇಕು. ಅದನ್ನು ಪವಿತ್ರ ಸ್ಥಳದೊಳಗೆ, ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ಊಟಮಾಡಬೇಕು.</verse>
				<verse number="27">ಆ ಪ್ರಾಣಿಯ ಮಾಂಸಕ್ಕೆ ಸೋಂಕಿದ್ದೆಲ್ಲವೂ ಪರಿಶುದ್ಧವಾಗುವುದು, ಅದರ ರಕ್ತದಲ್ಲಿ ಸ್ವಲ್ಪವಾದರೂ ಬಟ್ಟೆಯ ಮೇಲೆ ಬಿದ್ದರೆ ಆ ಬಟ್ಟೆಯನ್ನು ಪವಿತ್ರ ಸ್ಥಳದಲ್ಲೇ ಒಗೆದುಕೊಳ್ಳಬೇಕು.</verse>
				<verse number="28">ಅದನ್ನು ಬೇಯಿಸಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ತಾಮ್ರದ ಪಾತ್ರೆಯಲ್ಲಿ ಬೇಯಿಸಿದ್ದಾದರೆ ಆ ಪಾತ್ರೆಯನ್ನು ಬೆಳಗಿ ನೀರಿನಿಂದ ತೊಳೆಯಬೇಕು.</verse>
				<verse number="29">ಯಾಜಕರಲ್ಲಿ ಗಂಡಸರೆಲ್ಲರು ಅದನ್ನು ತಿನ್ನಬಹುದು; ಅದು ಮಹಾಪರಿಶುದ್ಧವಾದುದು.</verse>
				<verse number="30">ಆದರೆ ದೋಷಪರಿಹಾರಕ ಬಲಿಪ್ರಾಣಿಗಳಲ್ಲಿ ಯಾವ ಪ್ರಾಣಿಯ ರಕ್ತವು ದೋಷಪರಿಹಾರಕ್ಕಾಗಿ ದೇವದರ್ಶನದ ಗುಡಾರದೊಳಗೆ ತರಲಾಗಿದೆಯೋ ಅದರ ಮಾಂಸವನ್ನು ತಿನ್ನಲೇಬಾರದು; ಅದನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು.</verse>
			</chapter>
			<chapter number="7">
				<verse number="1">“ಪ್ರಾಯಶ್ಚಿತ್ತ ಬಲಿ ನಿಯಮಗಳು ಹೀಗಿವೆ: ಈ ಬಲಿ ಮಹಾಪರಿಶುದ್ಧವಾದುದು.</verse>
				<verse number="2">ದಹನ ಬಲಿಪ್ರಾಣಿಯನ್ನು ವಧಿಸಿದ ಸ್ಥಳದಲ್ಲೇ ಈ ಪ್ರಾಯಶ್ಚಿತ್ತ ಬಲಿಪ್ರಾಣಿಯನ್ನು ವಧಿಸಬೇಕು. ಯಾಜಕನು ಅದರ ರಕ್ತವನ್ನು ಬಲಿಪೀಠದ ಸುತ್ತಲು ಚಿಮುಕಿಸಬೇಕು.</verse>
				<verse number="3">ಅವನು ಅದರ ಕೊಬ್ಬನ್ನೆಲ್ಲ, ಅಂದರೆ ಬಾಲದ ಕೊಬ್ಬನ್ನು, ಕರುಳಿನ ಸುತ್ತಲಿರುವ ಕೊಬ್ಬನ್ನು,</verse>
				<verse number="4">ಮೂತ್ರಪಿಂಡಗಳನ್ನು ಅದರ ಮೇಲಿರುವ ಕೊಬ್ಬನ್ನೂ ಹಾಗು ಕಾಳಿಜದ ಉತ್ತಮ ಭಾಗವನ್ನು ತೆಗೆದು</verse>
				<verse number="5">ಬಲಿಪೀಠದ ಮೇಲೆ ಸರ್ವೇಶ್ವರನಿಗೆ ಹೋಮಮಾಡಬೇಕು. ಇದು ಪ್ರಾಯಶ್ಚಿತ್ತ ಬಲಿ.</verse>
				<verse number="6">ಹೋಮ ಶೇಷವನ್ನು ಯಾಜಕರಲ್ಲಿ ಗಂಡಸರೆಲ್ಲರು ತಿನ್ನಬಹುದು; ಅದು ಮಹಾಪರಿಶುದ್ಧವಾದುದರಿಂದ ಪವಿತ್ರ ಸ್ಥಳದೊಳಗೇ ಅದನ್ನು ತಿನ್ನಬೇಕು.</verse>
				<verse number="7">ಈ ಪ್ರಾಯಶ್ಚಿತ್ತ ಹಾಗು ದೋಷಪರಿಹಾರಕ ಬಲಿ ಹೋಮ ಶೇಷಗಳಿಗೆ ಇರುವ ವಿಧಿ ಒಂದೇ; ಈ ಹೋಮಶೇಷಗಳು ದೋಷಪರಿಹಾರವನ್ನು ಮಾಡಿಸುವ ಯಾಜಕನಿಗೆ ಸಲ್ಲತಕ್ಕವು.</verse>
				<verse number="8">ಯಾರಾದರು ದಹನಬಲಿಗಾಗಿ ಒಂದು ಪ್ರಾಣಿಯನ್ನು ತಂದಾಗ, ಅದರ ಚರ್ಮ ಆ ಪಶುವನ್ನು ಸಮರ್ಪಿಸುವ ಯಾಜಕನಿಗೆ ಸೇರಬೇಕು.</verse>
				<verse number="9">ಒಲೆಯಲ್ಲಾಗಲಿ, ಕಬ್ಬಿಣದ ಹಂಚಿನಲ್ಲಾಗಲಿ, ಬಾಂಡ್ಲಿಯಲ್ಲಾಗಲಿ ಬೇಯಿಸಿದ ನೈವೇದ್ಯ ಪದಾರ್ಥವೆಲ್ಲ ಅದನ್ನು ಸಮರ್ಪಿಸುವ ಯಾಜಕನಿಗೆ ಸೇರತಕ್ಕದ್ದು.</verse>
				<verse number="10">ಆದರೆ ಎಣ್ಣೆ ಹೊಯ್ದ ಹಿಟ್ಟನ್ನಾಗಲಿ, ಬರಿ ಹಿಟ್ಟನ್ನಾಗಲಿ ಯಾರಾದರು ನೈವೇದ್ಯಕ್ಕಾಗಿ ತಂದಾಗ ಅದನ್ನು ಆರೋನನ ವಂಶದವರೆಲ್ಲರು ಸಮವಾಗಿ ಅನುಭವಿಸತಕ್ಕದ್ದು.</verse>
				<verse number="11">“ಶಾಂತಿ ಸಮಾಧಾನದ ಬಲಿ ನಿಯಮಗಳು ಇವು:</verse>
				<verse number="12">ಯಾರಾದರು ಕೃತಜ್ಞತೆಯನ್ನು ಸಲ್ಲಿಸುವುದಕ್ಕಾಗಿ ಶಾಂತಿಸಮಾಧಾನದ ಬಲಿಯನ್ನು ಸರ್ವೇಶ್ವರನಿಗೆ ಅರ್ಪಿಸಲಾಶಿಸಿದರೆ ಆ ಬಲಿಪ್ರಾಣಿಯ ಸಮೇತ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಹಾಗು ಎಣ್ಣೆಯಿಂದ ಪೂರ್ತಿಯಾಗಿ ತೋಯಿಸಿದ ಗೋದಿಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.</verse>
				<verse number="13">ಅದೂ ಅಲ್ಲದೆ ಹುಳಿರೊಟ್ಟಿಗಳನ್ನು ಕೂಡ ಸಮರ್ಪಿಸಬೇಕು.</verse>
				<verse number="14">ಸಮರ್ಪಿಸುವ ಪ್ರತಿಯೊಂದು ವಿಧವಾದ ಪದಾರ್ಥಗಳಲ್ಲಿಯೂ ಒಂದೊಂದನ್ನು ಸರ್ವೇಶ್ವರನಿಗೋಸ್ಕರ ಪ್ರತ್ಯೇಕಿಸಬೇಕು. ಅವು ಪೀಠಕ್ಕೆ ಬಲಿಪ್ರಾಣಿಯ ರಕ್ತವನ್ನು ಚಿಮುಕಿಸಿದ ಯಾಜಕನಿಗೆ ಸೇರಬೇಕು.</verse>
				<verse number="15">ಕೃತಜ್ಞತಾ ಬಲಿಪ್ರಾಣಿಯ ಮಾಂಸವನ್ನು ಬಲಿ ನಡೆದ ದಿನದಲ್ಲೇ ಭೋಜನ ಮಾಡಬೇಕು. ಮರುದಿನದವರೆಗೆ ಕಿಂಚಿತ್ತನ್ನೂ ಉಳಿಸಬಾರದು.</verse>
				<verse number="16">“ಯಾರಾದರು ಹರಕೆಯನ್ನು ಸಲ್ಲಿಸುವುದಕ್ಕಾಗಿ ಅಥವಾ ಸ್ವೇಚ್ಛೆಯಿಂದ ಅಂಥ ಬಲಿಯನ್ನು ಒಪ್ಪಿಸಿದರೆ ಅದನ್ನು ಸಮರ್ಪಿಸಿದ ದಿನದಲ್ಲೇ ಅದರ ಮಾಂಸವನ್ನು ಪೂರ್ತಿಯಾಗಿ ಊಟ ಮಾಡಬೇಕಾಗಿಲ್ಲ; ಮಿಕ್ಕದ್ದನ್ನು ಮರುದಿನ ತಿನ್ನಬಹುದು.</verse>
				<verse number="17">ಆದರೆ ಮೂರನೆಯ ದಿನದವರೆಗೆ ಉಳಿದಿದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.</verse>
				<verse number="18">ಆ ಬಲಿಪ್ರಾಣಿಯ ಮಾಂಸದಲ್ಲಿ ಸ್ವಲ್ಪವನ್ನಾದರೂ ಮೂರನೆಯ ದಿನದಲ್ಲಿ ಊಟಮಾಡಿದ್ದೇ ಆದರೆ ಆ ಬಲಿ ಸ್ವೀಕೃತವಾಗುವುದಿಲ್ಲ. ಅರ್ಪಿಸಿದವನಿಗೆ ಅದರಿಂದ ಫಲವೇನೂ ದೊರಕುವುದಿಲ್ಲ. ಅದು ಹೇಯವಾದುದರಿಂದ ಅದನ್ನು ತಿಂದವನು ಆ ಪಾಪದ ಫಲವನ್ನು ಅನುಭವಿಸಬೇಕು.</verse>
				<verse number="19">“ಅಶುದ್ಧವಾದ ವಸ್ತುವಿಗೆ ಸೋಂಕಿದ ಮಾಂಸವನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು.</verse>
				<verse number="20">“ಶುದ್ಧವಾಗಿರುವವರೆಲ್ಲರು ಬಲಿಪ್ರಾಣಿಯ ಮಾಂಸವನ್ನು ತಿನ್ನಬಹುದು.</verse>
				<verse number="21">“ಯಾರಾದರು ಅಶುದ್ಧರಾಗಿದ್ದು ಸರ್ವೇಶ್ವರನಿಗೆ ಸಮರ್ಪಿತವಾದ ಶಾಂತಿಸಮಾಧಾನದ ಬಲಿಪ್ರಾಣಿಯ ಮಾಂಸವನ್ನು ತಿಂದರೆ ಅಂಥವರನ್ನು ತಮ್ಮ ಕುಲದಿಂದ ತೆಗೆದುಹಾಕಬೇಕು.</verse>
				<verse number="22">ಯಾರಿಗಾದರು ಮನುಷ್ಯ ದೇಹದಿಂದುಂಟಾದ ಅಶುದ್ಧವಸ್ತು, ಅಶುದ್ಧ ಮೃಗ, ನಿಷಿದ್ಧವಸ್ತು, ಇವುಗಳಲ್ಲಿ ಯಾವುದಾದರೂ ಸೋಂಕಿದರೆ ಅಂಥವರು ಸರ್ವೇಶ್ವರನಿಗೆ ಸಮರ್ಪಿತವಾದ ಬಲಿಪ್ರಾಣಿಯ ಮಾಂಸವನ್ನು ತಿನ್ನಕೂಡದು; ತಿಂದರೆ ಕುಲದಿಂದ ಬಹಿಷ್ಕೃತರಾಗಬೇಕು.</verse>
				<verse number="23">ಸರ್ವೇಶ್ವರ ಮೋಶೆಗೆ ಇಂತೆಂದರು: “ನೀನು ಇಸ್ರಯೇಲರಿಗೆ ಹೀಗೆ ಆಜ್ಞೆ ಮಾಡು:- ನೀವು ಎತ್ತು, ಕುರಿ ಹಾಗು ಆಡುಗಳ ಕೊಬ್ಬನ್ನು ತಿನ್ನಬಾರದು.</verse>
				<verse number="24">ಅಂಥ ಪ್ರಾಣಿ ರೋಗದಿಂದ ಸತ್ತರೆ, ಇಲ್ಲವೆ ಕಾಡುಮೃಗದಿಂದ ಕೊಲ್ಲಲ್ಪಟ್ಟರೆ ಅದರ ಕೊಬ್ಬನ್ನು ಬೇರೆ ಕೆಲಸಕ್ಕೆ ಉಪಯೋಗಿಸಿಕೊಳ್ಳಬಹುದು; ಆದರೆ ಎಷ್ಟು ಮಾತ್ರಕ್ಕೂ ತಿನ್ನಬಾರದು.</verse>
				<verse number="25">ಜನರು ಸರ್ವೇಶ್ವರನಿಗೆ ಹೋಮ ಮಾಡುವಂಥ ಪ್ರಾಣಿಪಶುಗಳ ಕೊಬ್ಬನ್ನು ಯಾರಾದರು ತಿಂದರೆ ಅವರು ಕುಲದಿಂದ ಬಹಿಷ್ಕೃತರಾಗಬೇಕು.</verse>
				<verse number="26">ಪಕ್ಷಿಯದಾಗಲಿ, ಪ್ರಾಣಿಯದಾಗಲಿ ಯಾವ ರಕ್ತವನ್ನೂ ನೀವು ಎಲ್ಲಿಯೂ ಊಟಮಾಡಬಾರದು.</verse>
				<verse number="27">ರಕ್ತವನ್ನು ಭೋಜನ ಮಾಡಿದವನು ಕುಲದಿಂದ ಬಹಿಷ್ಕೃತನಾಗಬೇಕು.”</verse>
				<verse number="28">ಮೋಶೆಗೆ ಸರ್ವೇಶ್ವರ ಹೇಳಿದ್ದೇನೆಂದರೆ:</verse>
				<verse number="29">“ಇಸ್ರಯೇಲರಿಗೆ ಹೀಗೆಂದು ಆಜ್ಞಾಪಿಸು: ಶಾಂತಿಸಮಾಧಾನದ ಬಲಿಪ್ರಾಣಿಯನ್ನು ಸರ್ವೇಶ್ವರನಿಗೆ ಸಮರ್ಪಿಸುವವನು ಆ ಬಲಿದ್ರವ್ಯಗಳಲ್ಲಿ ಸರ್ವೇಶ್ವರನಿಗೆ ಸಲ್ಲಬೇಕಾದುದನ್ನು ತಂದುಕೊಡಬೇಕು.</verse>
				<verse number="30">ಸರ್ವೇಶ್ವರನಿಗೆ ಹೋಮರೂಪವಾಗಿ ಸಮರ್ಪಿಸಬೇಕಾದುದನ್ನು ಅಂದರೆ ಪ್ರಾಣಿಯ ಕೊಬ್ಬನ್ನು ತನ್ನ ಕೈಯಿಂದಲೆ ಕೊಡಬೇಕು. ಅದರೊಂದಿಗೆ ಅದರ ಎದೆಯ ಭಾಗವನ್ನು ನೈವೇದ್ಯರೂಪವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಲು ತಂದು ಸಮರ್ಪಿಸಬೇಕು.</verse>
				<verse number="31">ಯಾಜಕನು ಆ ಕೊಬ್ಬನ್ನು ಬಲಿಪೀಠದ ಮೇಲೆ ಹೋಮಮಾಡಬೇಕು. ಎದೆಯ ಭಾಗ ಆರೋನನಿಗೂ ಅವನ ವಂಶಜರಿಗೂ ಸೇರಬೇಕು.</verse>
				<verse number="32">ನೀವು ಶಾಂತಿಸಮಾಧಾನದ ಬಲಿದ್ರವ್ಯಗಳಲ್ಲಿ ಪ್ರಾಣಿಯ ಬಲತೊಡೆಯನ್ನು ಯಾಜಕನಿಗಾಗಿ ಪ್ರತ್ಯೇಕಿಸಿ ಕೊಡಬೇಕು.</verse>
				<verse number="33">ಆರೋನನ ವಂಶಜರಲ್ಲಿ ಯಾವನು ಆ ಬಲಿಪ್ರಾಣಿಯ ರಕ್ತವನ್ನು ಹಾಗು ಕೊಬ್ಬನ್ನು ಅರ್ಪಿಸುತ್ತಾನೋ, ಆ ಪ್ರಾಣಿಯ ಬಲತೊಡೆ ಅವನ ಪಾಲಿಗೆ ಸೇರಬೇಕು.</verse>
				<verse number="34">ಶಾಂತಿಸಮಾಧಾನದ ಬಲಿಪ್ರಾಣಿಯ ಮಾಂಸದಲ್ಲಿ ನೈವೇದ್ಯರೂಪವಾಗಿ ಆರತಿಯೆತ್ತುವ ಎದೆಯ ಭಾಗವನ್ನು ಮತ್ತು ಯಾಜಕನಿಗಾಗಿ ಪ್ರತ್ಯೇಕಿಸುವ ತೊಡೆಯನ್ನು ಸರ್ವೇಶ್ವರ ಇಸ್ರಯೇಲ್ ಜನರಿಂದ ತೆಗೆದುಕೊಂಡು ಮಹಾಯಾಜಕ ಆರೋನನಿಗೂ ಅವನ ವಂಶಜರಿಗೂ ಕೊಟ್ಟು, ಅದು ಶಾಶ್ವತ ನಿಯಮವಾಗಿ ಅವರಿಗೆ ಸಲ್ಲುವಂತೆ ಮಾಡಿದ್ದಾರೆ.</verse>
				<verse number="35">ಸರ್ವೇಶ್ವರನಿಗೆ ಹೋಮರೂಪವಾಗಿ ಅರ್ಪಿತವಾದ ದ್ರವ್ಯಗಳಲ್ಲಿ ಇವೇ ಆರೋನನಿಗೂ ಅವನ ವಂಶಜರಿಗೂ ಶಾಶ್ವತವಾಗಿ ಸಲ್ಲತಕ್ಕ ಭಾಗಗಳು. ಮೋಶೆ ಅವರನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಯಾಜಕ ಸೇವಾವೃತ್ತಿಗಾಗಿ ಪ್ರತಿಷ್ಠಾಪಿಸಿದ ದಿನದಂದೇ ಇದು ನೇಮಕವಾಯಿತು.</verse>
				<verse number="36">ಇಸ್ರಯೇಲರು ಇವುಗಳನ್ನು ಯಾಜಕರಿಗೆ ಸಲ್ಲಿಸಬೇಕೆಂದು ಸರ್ವೇಶ್ವರ ಅವರನ್ನು ಮೋಶೆಯ ಮುಖಾಂತರ ಪ್ರತಿಷ್ಠಿಸಿ ಅಭಿಷೇಕಿಸಿದ ದಿನದಲ್ಲೇ ವಿಧಿಸಿದರು.”</verse>
				<verse number="37">ದಹನಬಲಿದಾನ, ಧಾನ್ಯನೈವೇದ್ಯ, ದೋಷಪರಿಹಾರಕ ಬಲಿ, ಪ್ರಾಯಶ್ಚಿತ್ತ ಬಲಿ, ಯಾಜಕ ಅಭ್ಯಂಜನ ಬಲಿ, ಶಾಂತಿಸಮಾಧಾನ ಬಲಿ ಎಂಬ ಇವುಗಳ ವಿಷಯದಲ್ಲಿ ಮೇಲೆ ಹೇಳಿದ್ದೇ ಬಲಿದಾನ ವಿಧಿಗಳು.</verse>
				<verse number="38">ಸರ್ವೇಶ್ವರ ಸೀನಾಯಿ ಬೆಟ್ಟದಲ್ಲಿ ಮೋಶೆಗೆ ಈ ಆಜ್ಞೆಗಳನ್ನು ಕೊಟ್ಟರು. ಸೀನಾಯಿ ಮರುಭೂಮಿಯಲ್ಲಿ ಇಸ್ರಯೇಲರು ಅರ್ಪಿಸಬೇಕಾದುದನ್ನು ಸರ್ವೇಶ್ವರನಿಗೆ ಅರ್ಪಿಸಬೇಕೆಂದು ಮೋಶೆ ಆಜ್ಞಾಪಿಸಿ ಮೇಲ್ಕಂಡ ವಿಧಿಗಳನ್ನು ಕೊಟ್ಟನು.</verse>
			</chapter>
			<chapter number="8">
				<verse number="1">ಸರ್ವೇಶ್ವರ ಸ್ವಾಮಿ ಮೋಶೆಗೆ:</verse>
				<verse number="2">“ನೀನು ಆರೋನನನ್ನೂ ಅವನ ಗಂಡು ಮಕ್ಕಳನ್ನೂ ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು, ಅಭಿಷೇಕ ತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಹಾಗು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡು ಬಾ;</verse>
				<verse number="3">ಜನಸಮೂಹವನ್ನೆಲ್ಲ ದೇವದರ್ಶನದ ಗುಡಾರದ ಬಾಗಿಲ ಬಳಿಗೆ ಕರೆಯಿಸು,” ಎಂದು ಆಜ್ಞೆ ಮಾಡಿದರು.</verse>
				<verse number="4">ಸರ್ವೇಶ್ವರ ಹೇಳಿದಂತೆಯೇ ಮೋಶೆ ಮಾಡಿದನು. ಜನರೆಲ್ಲರು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಕೂಡಿಬಂದರು.</verse>
				<verse number="5">ಮೋಶೆ ಅವರಿಗೆ, “ನಾನು ಈಗ ಮಾಡುವ ಕಾರ್ಯ ಸರ್ವೇಶ್ವರ ಸ್ವಾಮಿಯೇ ಆಜ್ಞಾಪಿಸಿದ ಕಾರ್ಯ,” ಎಂದು ಹೇಳಿದನು.</verse>
				<verse number="6">ಬಳಿಕ ಮೋಶೆ ಆರೋನನನ್ನೂ ಅವನ ಪುತ್ರರನ್ನೂ ಹತ್ತಿರಕ್ಕೆ ಬರಮಾಡಿಕೊಂಡು ಸ್ನಾನ ಮಾಡಿಸಿದನು.</verse>
				<verse number="7">ಆಮೇಲೆ ಸರ್ವೇಶ್ವರ ಆಜ್ಞಾಪಿಸಿದಂತೆಯೇ ಆರೋನನಿಗೆ ನಿಲುವಂಗಿಯನ್ನು ತೊಡಿಸಿ, ನಡುಕಟ್ಟನ್ನು ಸುತ್ತಿಸಿ, ಅದರಿಂದ ಅವನ ಕವಚವನ್ನು ಕಟ್ಟಿ,</verse>
				<verse number="8">ವಕ್ಷಪದಕವನ್ನು ಅವನಿಗೆ ಬಿಗಿಸಿ, ಅದರ ಚೀಲದೊಳಗೆ ಊರೀಮ್ ಹಾಗು ತುಮ್ಮೀಮ್ ಎಂಬ ದಾಳಗಳನ್ನು ಹಾಕಿ</verse>
				<verse number="9">ಅವನ ತಲೆಗೆ ಸಿರಿಪೇಟವನ್ನು ತೊಡಿಸಿ, ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನು ಕಟ್ಟಿದನು; ಅದು ಅವನಿಗೆ ಪವಿತ್ರ ಕಿರೀಟದಂತಿತ್ತು.</verse>
				<verse number="10">ಅನಂತರ ಮೋಶೆ ಅಭಿಷೇಕದ ಎಣ್ಣೆಯನ್ನು ತೆಗೆದುಕೊಂಡು ದೇವದರ್ಶನದ ಗುಡಾರವನ್ನು ಹಾಗು ಅದರಲ್ಲಿದ್ದ ಎಲ್ಲವನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.</verse>
				<verse number="11">ಬಲಿಪೀಠದ ಮೇಲೆ ಏಳು ಸಾರಿ ಆ ಎಣ್ಣೆಯನ್ನು ಚಿಮುಕಿಸಿ ಬಲಿಪೀಠವನ್ನು, ಅದರ ಎಲ್ಲ ಉಪಕರಣಗಳನ್ನು ಹಾಗು ನೀರಿನ ತೊಟ್ಟಿಯನ್ನು ಅದರ ಪೀಠವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.</verse>
				<verse number="12">ಆ ಎಣ್ಣೆಯಲ್ಲಿ ಸ್ವಲ್ಪವನ್ನು ಆರೋನನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.</verse>
				<verse number="13">ಅನಂತರ ಸರ್ವೇಶ್ವರ ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ನಿಲುವಂಗಿಗಳನ್ನು ತೊಡಿಸಿ, ನಡುಕಟ್ಟುಗಳನ್ನು ಸುತ್ತಿ, ಪೇಟಗಳನ್ನು ತೊಡಿಸಿದನು.</verse>
				<verse number="14">ಅನಂತರ ಅವನು ದೋಷಪರಿಹಾರಾರ್ಥವಾದ ಹೋರಿಯನ್ನು ತರಿಸಿದನು. ಆರೋನನು ಮತ್ತು ಅವನ ಮಕ್ಕಳು ತಮ್ಮ ಕೈಗಳನ್ನು ಅದರ ತಲೆಯ ಮೇಲೆ ಚಾಚಿದರು.</verse>
				<verse number="15">ಆ ಹೋರಿಯನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ತನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಸುತ್ತಲೂ ಹಚ್ಚಿ ಬಲಿಪೀಠವನ್ನು ಪ್ರತಿಷ್ಠಿಸಿದನು. ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಸುರಿದುಬಿಟ್ಟನು. ಹೀಗೆ ಬಲಿಪೀಠದ ಬಗ್ಗೆ ದೋಷಪರಿಹಾರಕ ಆಚಾರವನ್ನು ನಡೆಸಿ ಅದನ್ನು ಪವಿತ್ರೀಕರಿಸಿ ಪ್ರತಿಷ್ಠಾಪಿಸಿದನು.</verse>
				<verse number="16">ಆ ಹೋರಿಯ ಕರುಳುಗಳ ಸುತ್ತಲಿರುವ ಎಲ್ಲ ಕೊಬ್ಬನ್ನು, ಕಾಳಿಜದ ಹತ್ತಿರವಿರುವ ಕೊಬ್ಬನ್ನು, ಮೂತ್ರಪಿಂಡಗಳನ್ನು ಹಾಗು ಅವುಗಳ ಮೇಲಿರುವ ಕೊಬ್ಬನ್ನು ಮೋಶೆ ತೆಗೆದುಕೊಂಡು ಬಲಿಪೀಠದ ಮೇಲೆ ಹೋಮಮಾಡಿದನು.</verse>
				<verse number="17">ಸರ್ವೇಶ್ವರನ ಆಜ್ಞಾನುಸಾರ ಆ ಪ್ರಾಣಿಯ ಮಿಕ್ಕ ಭಾಗಗಳನ್ನು, ಅಂದರೆ ಅದರ ಚರ್ಮ, ಮಾಂಸ ಹಾಗು ಕಲ್ಮಷಗಳನ್ನು ಪಾಳೆಯದ ಹೊರಗೆ ಬೆಂಕಿಯಿಂದ ಸುಡಿಸಿಬಿಟ್ಟನು.</verse>
				<verse number="18">ತರುವಾಯ ಅವನು ದಹನ ಬಲಿಗಾಗಿ ಟಗರನ್ನು ತರಿಸಿದನು. ಆರೋನನು ಮತ್ತು ಅವನ ಮಕ್ಕಳು ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಚಾಚಿದರು.</verse>
				<verse number="19">ಅದನ್ನು ವಧಿಸಿದ ಮೇಲೆ ಮೋಶೆ ಅದರ ರಕ್ತವನ್ನು ಬಲಿಪೀಠದ ಸುತ್ತಲೂ ಚಿಮುಕಿಸಿದನು.</verse>
				<verse number="20">ಆ ಟಗರನ್ನು ತುಂಡುತುಂಡಾಗಿ ಕಡಿದ ಮೇಲೆ ಮೋಶೆ ಅದರ ತಲೆಯನ್ನೂ ಮಾಂಸಖಂಡಗಳನ್ನೂ ಕೊಬ್ಬನ್ನೂ ಹೋಮಮಾಡಿದನು.</verse>
				<verse number="21">ಅದರ ಕರುಳುಗಳನ್ನೂ, ಕಾಲುಗಳನ್ನೂ ನೀರಿನಿಂದ ತೊಳೆಯಿಸಿ ಆ ಟಗರನ್ನು ಬಲಿಪೀಠದ ಮೇಲೆ ಪೂರ್ತಿಯಾಗಿ ಹೋಮಮಾಡಿಬಿಟ್ಟನು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅದು ದಹನಬಲಿ, ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ಬಲಿಯಾಯಿತು.</verse>
				<verse number="22">ಇದಾದ ಮೇಲೆ ಯಾಜಕಾಭಿಷೇಕಕ್ಕಾಗಿ ಸಮರ್ಪಿಸಬೇಕಾದ ಎರಡನೆಯ ಟಗರನ್ನು ಮೋಶೆ ತರಿಸಿದನು. ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನು ಚಾಚಿದರು.</verse>
				<verse number="23">ಅದನ್ನು ವಧಿಸಿದ ನಂತರ ಮೋಶೆ ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಅವನ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು.</verse>
				<verse number="24">ಬಳಿಕ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು ಆ ರಕ್ತದಲ್ಲಿ ಕಿಂಚಿತ್ತನ್ನು ಅವರವರ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗು ಹಾಗು ಬಲಗಾಲಿನ ಹೆಬ್ಬೆಟ್ಟಿಗು ಹಚ್ಚಿದನು. ಉಳಿದ ರಕ್ತವನ್ನು ಬಲಿಪೀಠದ ಸುತ್ತಲು ಚಿಮುಕಿಸಿದನು.</verse>
				<verse number="25">ಹಾಗೆಯೆ ಮೋಶೆ ಆ ಟಗರಿನ ಕೊಬ್ಬನ್ನು, ಅಂದರೆ ಬಾಲದ ಕೊಬ್ಬು, ಕರುಳುಗಳ ಸುತ್ತಲಿನ ಕೊಬ್ಬು, ಕಾಳಿಜದ ಹತ್ತಿರವಿರುವ ಕೊಬ್ಬು, ಮೂತ್ರಪಿಂಡಗಳು ಅವುಗಳ ಮೇಲಿರುವ ಕೊಬ್ಬು, ಇವುಗಳನ್ನು ಮತ್ತು ಬಲದೊಡೆಯನ್ನು ತೆಗೆದುಕೊಂಡನು.</verse>
				<verse number="26">ಸರ್ವೇಶ್ವರನ ಸನ್ನಿಧಿಯಲ್ಲಿ ಬುಟ್ಟಿಯಲ್ಲಿಟ್ಟಿದ್ದ ಹುಳಿಯಿಲ್ಲದ ತಿಂಡಿಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆ ಮಿಶ್ರವಾದ ಒಂದು ಹೋಳಿಗೆಯನ್ನು ಹಾಗು ಒಂದು ಕಡುಬನ್ನು ತೆಗೆದುಕೊಂಡು ಆ ಕೊಬ್ಬಿನ ಮತ್ತು ಬಲದೊಡೆಯ ಮೇಲೆ ಇಟ್ಟನು.</verse>
				<verse number="27">ಇವೆಲ್ಲವುಗಳನ್ನು ಆರೋನನ ಮತ್ತು ಅವನ ಮಕ್ಕಳ ಕೈಗಳಿಗೆ ಕೊಟ್ಟು ನೈವೇದ್ಯವೆಂದು ಸೂಚಿಸುವುದಕ್ಕಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಿಸಿದನು.</verse>
				<verse number="28">ಆಮೇಲೆ ಮೋಶೆ ಅವುಗಳನ್ನು ಅವರ ಕೈಗಳಿಂದ ತೆಗೆದುಕೊಂಡು ಬಲಿಪೀಠದಲ್ಲಿ ದಹನಬಲಿ ದ್ರವ್ಯದ ಮೇಲಿಟ್ಟು ಹೋಮಮಾಡಿದನು. ಅದು ಸರ್ವೇಶ್ವರನಿಗೆ ಪ್ರಿಯವಾದ ಸುಗಂಧಕರ ದಹನಬಲಿ, ಯಾಜಕಾಭಿಷೇಕ ಬಲಿಯಾಗಿತ್ತು.</verse>
				<verse number="29">ಮೋಶೆ ಬಲಿಪ್ರಾಣಿಯ ಎದೇಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಿದನು. ಸರ್ವೇಶ್ವರನ ಆಜ್ಞಾನುಸಾರ ಆ ಯಾಜಕಾಭಿಷೇಕ ಬಲಿಯ ಟಗರಿನ ಎದೆಯ ಭಾಗ ಮೋಶೆಗೆ ಸಲ್ಲತಕ್ಕದಾಗಿತ್ತು.</verse>
				<verse number="30">ಬಳಿಕ ಮೋಶೆ ಅಭಿಷೇಕ ಎಣ್ಣೆಯಿಂದಲೂ ಬಲಿಪೀಠದ ಮೇಲಿದ್ದ ರಕ್ತದಿಂದಲೂ ಸ್ವಲ್ಪ ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೂ ಚಿಮುಕಿಸಿದನು. ಹೀಗೆ ಆರೋನನನ್ನೂ ಅವನ ಮಕ್ಕಳನ್ನೂ ಪ್ರತಿಷ್ಠಿಸಿದನು.</verse>
				<verse number="31">ಆರೋನನಿಗೂ ಅವನ ಮಕ್ಕಳಿಗೂ ಮೋಶೆ ಹೀಗೆಂದನು: “ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಬೇಯಿಸಬೇಕು. ಅದನ್ನೂ ಯಾಜಕಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ರೊಟ್ಟಿಗಳನ್ನೂ ನೀವು ಅಲ್ಲೆ ಊಟಮಾಡಬೇಕು. ಇದು ಸರ್ವೇಶ್ವರನು ನನಗಿತ್ತ ಆಜ್ಞೆ.</verse>
				<verse number="32">ಆ ಮಾಂಸದಲ್ಲಿ ಹಾಗು ರೊಟ್ಟಿಗಳಲ್ಲಿ ಮಿಕ್ಕದ್ದನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು.</verse>
				<verse number="33">ಇದಲ್ಲದೆ, ಈ ನಿಮ್ಮ ಯಾಜಕ ಸೇವಾವೃತ್ತಿಯ ದೀಕ್ಷೆಯನ್ನು ಪೂರೈಸುವುದಕ್ಕೆ ಏಳು ದಿವಸ ಹಿಡಿಯುವುದರಿಂದ ಆವರೆಗೂ ನೀವು ದೇವದರ್ಶನದ ಗುಡಾರದ ಬಾಗಿಲಿನ ಆಚೆಗೆ ಹೋಗಬಾರದು.</verse>
				<verse number="34">ನಿಮ್ಮ ದೋಷಪರಿಹಾರಕ್ಕಾಗಿ ಈ ದಿನ ಏನೇನು ನಡೆಯಿತೋ ಅದನ್ನು ಏಳು ದಿನವೂ ನಡೆಸಬೇಕೆಂಬುದು ಸರ್ವೇಶ್ವರನ ಆಜ್ಞೆ.</verse>
				<verse number="35">ಆದುದರಿಂದ ನೀವು ಆ ಆಜ್ಞೆಯ ಮೇರೆಗೆ ಏಳು ದಿನಗಳೂ ಹಗಲಿರುಳು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಇರಬೇಕು; ಇಲ್ಲದಿದ್ದರೆ ಸಾಯುವಿರಿ. ಇದು ಸರ್ವೇಶ್ವರನ ಆಜ್ಞೆ.</verse>
				<verse number="36">ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದ್ದನ್ನೆಲ್ಲಾ ಆರೋನ ಮತ್ತು ಅವನ ಮಕ್ಕಳು ಮಾಡಿದರು.</verse>
			</chapter>
			<chapter number="9">
				<verse number="1">ಎಂಟನೆಯ ದಿನ ಮೋಶೆ ಆರೋನನನ್ನೂ ಅವನ ಮಕ್ಕಳನ್ನೂ ಹಾಗು ಇಸ್ರಯೇಲರ ಹಿರಿಯರನ್ನೂ ಕರೆಸಿದನು.</verse>
				<verse number="2">ಆರೋನನಿಗೆ, “ನೀನು ಪರಿಹಾರಕ ಬಲಿದಾನಕ್ಕಾಗಿ ಕಳಂಕರಹಿತವಾದ ಹೋರಿಕರುವನ್ನು ಮತ್ತು ದಹನಬಲಿಗಾಗಿ ಕಳಂಕರಹಿತವಾದ ಟಗರನ್ನು ತೆಗೆದುಕೊಂಡು ಸರ್ವೇಶ್ವರನ ಸನ್ನಿಧಿಯಲ್ಲಿ ನಿನಗೋಸ್ಕರ ಸಮರ್ಪಿಸು.</verse>
				<verse number="3">ಮತ್ತು ನೀನು ಇಸ್ರಯೇಲರ ಸಂಗಡ ಮಾತಾಡಿ ಅವರಿಗೆ, ‘ಈ ದಿನ ಸರ್ವೇಶ್ವರ ಸ್ವಾಮಿ ಪ್ರತ್ಯಕ್ಷರಾಗುತ್ತಾರೆ. ಆದುದರಿಂದ ನೀವು ಅವರ ಸನ್ನಿಧಿಯಲ್ಲಿ ಸಮರ್ಪಿಸಲು ದೋಷಪರಿಹಾರಕ್ಕಾಗಿ ಒಂದು ಹೋತವನ್ನು, ದಹನಬಲಿಗಾಗಿ ಒಂದು ವರ್ಷದ ಕಳಂಕರಹಿತವಾದ ಒಂದು ಕರು ಹಾಗು ಒಂದು ಕುರಿಯನ್ನು,</verse>
				<verse number="4">ಶಾಂತಿಸಮಾಧಾನ ಬಲಿಗಾಗಿ ಒಂದು ಹೋರಿ ಹಾಗು ಒಂದು ಟಗರನ್ನು ಮತ್ತು ನೈವೇದ್ಯಕ್ಕಾಗಿ ಎಣ್ಣೆ ಮಿಶ್ರವಾದ ಪದಾರ್ಥವನ್ನು ತೆಗೆದುಕೊಂಡು ಬರಬೇಕೆಂದು ಆಜ್ಞಾಪಿಸು,” ಎಂದನು.</verse>
				<verse number="5">ಮೋಶೆಯ ಆಜ್ಞಾನುಸಾರ ಅವರು ಕಾಣಿಕೆಗಳನ್ನೆಲ್ಲ ದೇವದರ್ಶನದ ಗುಡಾರದ ಬಳಿಗೆ ತಂದರು. ಇಸ್ರಯೇಲ್ ಸಮಾಜದವರೆಲ್ಲರು ಹತ್ತಿರಕ್ಕೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ನಿಂತರು.</verse>
				<verse number="6">ಮೋಶೆ ಅವರಿಗೆ, “ನೀವು ಇವುಗಳನ್ನೆಲ್ಲ ಮಾಡಬೇಕೆಂದು ಸರ್ವೇಶ್ವರ ಸ್ವಾಮಿಯೇ ಆಜ್ಞಾಪಿಸಿದ್ದಾರೆ; ಅದರಂತೆ ನೀವು ನಡೆದುಕೊಂಡರೆ ಸರ್ವೇಶ್ವರನ ಮಹಿಮೆ ನಿಮಗೆ ಪ್ರತ್ಯಕ್ಷವಾಗುವುದು,” ಎಂದು ಹೇಳಿದನು.</verse>
				<verse number="7">ಅನಂತರ ಮೋಶೆ ಆರೋನನಿಗೆ, “ಬಲಿಪೀಠದ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕ ಬಲಿಯನ್ನು ಮತ್ತು ದಹನಬಲಿಯನ್ನು ಸಮರ್ಪಿಸಿ ನಿನ್ನ ಹಾಗು ಜನರ ದೋಷವನ್ನು ಪರಿಹರಿಸು. ಜನರು ತಂದದ್ದನ್ನು ಸಮರ್ಪಿಸಿ ಸರ್ವೇಶ್ವರನ ಆಜ್ಞೆಯಂತೆ ಅವರ ದೋಷವನ್ನು ಪರಿಹರಿಸು,” ಎಂದು ಹೇಳಿದನು.</verse>
				<verse number="8">ಅಂತೆಯೇ ಆರೋನನು ಬಲಿಪೀಠದ ಹತ್ತಿರಕ್ಕೆ ಹೋಗಿ ತನಗಾಗಿ ಹೋರಿಯನ್ನು ದೋಷಪರಿಹಾರಕ ಬಲಿಯಾಗಿ ವಧಿಸಿದನು.</verse>
				<verse number="9">ಆರೋನನ ಮಕ್ಕಳು ಆ ಬಲಿಪ್ರಾಣಿಯ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ, ಬಲಿಪೀಠದ ಕೊಂಬುಗಳಗೆ ಹಚ್ಚಿ, ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಹೊಯ್ದನು.</verse>
				<verse number="10">ದೋಷಪರಿಹಾರಕ ಬಲಿಪ್ರಾಣಿಯ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಾಳಿಜದ ಹತ್ತಿರವಿರುವ ಕೊಬ್ಬನ್ನು, ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ, ಬಲಿಪೀಠದ ಮೇಲೆ ಹೋಮಮಾಡಿದನು.</verse>
				<verse number="11">ಅದರ ಮಾಂಸವನ್ನೂ ಚರ್ಮವನ್ನೂಪಾಳೆಯದ ಹೊರಗೆ ಬೆಂಕಿಯಲ್ಲಿ ಸುಡಿಸಿಬಿಟ್ಟನು.</verse>
				<verse number="12">ತರುವಾಯ ದಹನಬಲಿಯ ಪ್ರಾಣಿಯನ್ನು ವಧಿಸಿಬಿಟ್ಟನು. ಆರೋನನ ಮಕ್ಕಳು ಅದರ ರಕ್ತವನ್ನು ತಂದು ಅವನಿಗೆ ಒಪ್ಪಿಸಿದರು. ಅವನು ಅದನ್ನು ಬಲಿಪೀಠದ ಸುತ್ತಲು ಚಿಮುಕಿಸಿದನು.</verse>
				<verse number="13">ಅವರು ಆ ಪ್ರಾಣಿಯ ಮಾಂಸಖಂಡಗಳನ್ನೂ ತಲೆಯನ್ನೂ ಒಂದೊಂದಾಗಿ ಒಪ್ಪಿಸಿದಾಗ ಅವನು ಅವುಗಳನ್ನು ಬಲಿಪೀಠದ ಮೇಲೆ ಹೋಮಮಾಡಿದನು.</verse>
				<verse number="14">ಅದರ ಕರುಳುಗಳನ್ನೂ, ಕಾಲುಗಳನ್ನೂ ತೊಳೆಯಿಸಿ, ಬಲಿಪೀಠದಲ್ಲಿ ದಹನ ಬಲಿದ್ರವ್ಯದ ಮೇಲಿಟ್ಟು ಹೋಮಮಾಡಿದನು.</verse>
				<verse number="15">ಅದಾದ ಮೇಲೆ ಜನರು ಸಮರ್ಪಿಸಿದ ಪ್ರಾಣಿಗಳನ್ನು ಆರೋನನು ತರಿಸಿ ಅವುಗಳಲ್ಲಿ ದೋಷಪರಿಹಾರಕವಾದ ಹೋತವನ್ನು ಮೊದಲನೆಯ ಬಲಿಪ್ರಾಣಿಯಾಗಿ ವಧಿಸಿ ಜನರ ದೋಷಪರಿಹಾರಾರ್ಥವಾಗಿ ಸಮರ್ಪಿಸಿದನು.</verse>
				<verse number="16">ಅಂತೆಯೆ ದಹನಬಲಿಪ್ರಾಣಿಯನ್ನೂ ವಿಧಿಬದ್ಧವಾಗಿ ಸಮರ್ಪಿಸಿದನು.</verse>
				<verse number="17">ಜನರು ತಂದ ನೈವೇದ್ಯ ದ್ರವ್ಯಗಳಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಬೆಳಿಗ್ಗೆಯ ದಹನಬಲಿಯ ಜೊತೆಗೆ ಅದನ್ನು ಪೀಠದ ಮೇಲೆ ಹೋಮಮಾಡಿದನು.</verse>
				<verse number="18">ಅನಂತರ ಜನರ ಪರವಾಗಿ ಶಾಂತಿಸಮಾಧಾನದ ಬಲಿದಾನಕ್ಕಾಗಿ ನೇಮಕವಾದ ಹೋರಿಯನ್ನೂ ಟಗರನ್ನೂ ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಿದಾಗ, ಅವನು ಅದನ್ನು ಬಲಿಪೀಠದ ಸುತ್ತಲೂ ಚಿಮುಕಿಸಿದನು.</verse>
				<verse number="19">ಅವರು ಆ ಹೋರಿಯ ಕೊಬ್ಬನ್ನು, ಟಗರಿನ ಬಾಲದ ಕೊಬ್ಬನ್ನು, ಕರುಳ ಸುತ್ತಲಿನ ಕೊಬ್ಬನ್ನು, ಮೂತ್ರಪಿಂಡಗಳನ್ನು ಹಾಗು ಕಾಳಿಜದ ಹತ್ತಿರವಿರುವ ಕೊಬ್ಬನ್ನು</verse>
				<verse number="20">ಎದೆಯ ಭಾಗಗಳ ಮೇಲೆ ಇಟ್ಟು ಒಪ್ಪಿಸಿದನು. ಆರೋನನು ಆ ಕೊಬ್ಬನ್ನು ಬಲಿಪೀಠದ ಮೇಲೆ ಹೋಮಮಾಡಿದನು.</verse>
				<verse number="21">ಮೋಶೆಯ ಆಜ್ಞಾನುಸಾರ ಅವನು ಅವುಗಳ ಎದೆಯ ಭಾಗಗಳನ್ನೂ ಬಲತೊಡೆಗಳನ್ನೂ ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಿದನು.</verse>
				<verse number="22">ಆರೋನನು ಆ ದೋಷಪರಿಹಾರಕ ಬಲಿಯನ್ನೂ ದಹನಬಲಿಯನ್ನೂ ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿದ ನಂತರ ತನ್ನ ಕೈಗಳನ್ನು ಜನರ ಕಡೆಗೆ ಎತ್ತಿ ಅವರನ್ನು ಆಶೀರ್ವದಿಸಿದನು. ಆಮೇಲೆ ಬಲಿಪೀಠದಿಂದ ಇಳಿದು ಬಂದನು.</verse>
				<verse number="23">ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅಲ್ಲಿಂದ ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಸರ್ವೇಶ್ವರನ ಮಹಿಮೆ ಜನರಿಗೆ ಪ್ರತ್ಯಕ್ಷವಾಯಿತು.</verse>
				<verse number="24">ಸರ್ವೇಶ್ವರನ ಸನ್ನಿಧಿಯಿಂದ ಅಗ್ನಿ ಹೊರಟು ಬಲಿಪೀಠದ ಮೇಲಿದ್ದ ದಹನಬಲಿದ್ರವ್ಯವನ್ನೂ, ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರು ಅದನ್ನು ಕಂಡು ಜಯ ಜಯಕಾರ ಮಾಡಿದರು; ಅಡ್ಡಬಿದ್ದು ನಮಸ್ಕರಿಸಿದರು.</verse>
			</chapter>
			<chapter number="10">
				<verse number="1">ಆರೋನನ ಮಕ್ಕಳಲ್ಲಿ ನಾದಾಬ್ ಮತ್ತು ಅಬೀಹು ಎಂಬಿಬ್ಬರು ತಮ್ಮ ತಮ್ಮ ಧೂಪ ಕಳಸಗಳಲ್ಲಿ ಸರ್ವೇಶ್ವರ ಸ್ವಾಮಿ ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಿ ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿದರು.</verse>
				<verse number="2">ಆಗ ಸರ್ವೇಶ್ವರನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ನಾಶಮಾಡಿತು. ಅವರು ಸರ್ವೇಶ್ವರನ ಸನ್ನಿಧಿಯಲ್ಲೇ ಸತ್ತರು.</verse>
				<verse number="3">ಆಗ ಮೋಶೆ ಆರೋನನಿಗೆ: “’ನನ್ನ ಬಳಿಯಿರುವವರ ಮುಖಾಂತರವೆ ನನ್ನ ಪರಿಶುದ್ಧತೆಯನ್ನು ತೋರ್ಪಡಿಸುವೆ ಜನರೆಲ್ಲರ ಸಮ್ಮುಖದಲೆ ನನ್ನ ಮಹಿಮೆಯನು ಶೃತಪಡಿಸುವೆ, ಎಂಬ ಸರ್ವೇಶ್ವರನ ನುಡಿಗೆ ಇದೊಂದು ದೃಷ್ಟಾಂತವೇ ಸರಿ,” ಎಂದನು. ಅದಕ್ಕೆ ಆರೋನನು ಮೌನವಾಗಿದ್ದನು.</verse>
				<verse number="4">ಮೋಶೆ ಆರೋನನ ಚಿಕ್ಕಪ್ಪನಾದ ಉಜ್ಜಿಯೇಲನ ಮಕ್ಕಳಾದ ಮೀಶಾಯೇಲನನ್ನು ಮತ್ತು ಎಲ್ಸಾಫನನ್ನು ಕರೆಸಿ, “ನೀವು ಇಲ್ಲಿಗೆ ಬಂದು ನಿಮ್ಮ ಅಣ್ಣಂದಿರ ಶವಗಳನ್ನು ದೇವಮಂದಿರದಿಂದ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋಗಿ,” ಎಂದನು.</verse>
				<verse number="5">ಮೋಶೆಯ ಅಪ್ಪಣೆಯ ಮೇರೆಗೆ ಅವರು ಬಂದು ಸತ್ತವರ ನಿಲುವಂಗಿಗಳನ್ನು ತೆಗೆಯದೆ ಅವರ ಶವಗಳನ್ನು ಹೊರಕ್ಕೆ ಹೊತ್ತುಕೊಂಡು ಹೋದರು.</verse>
				<verse number="6">ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಹಾಗು ಈತಾಮಾರ್ ಎಂಬುವರಿಗೆ, “ನೀವು ಸಂತಾಪ ಸೂಚಿಸಲು ಕೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವು ಕೂಡ ಸಾಯುವಿರಿ; ಅದು ಮಾತ್ರವಲ್ಲ, ಇಡೀ ಜನಸಮೂಹದ ಮೇಲೆ ಸರ್ವೇಶ್ವರ ಸಿಟ್ಟುಗೊಳ್ಳುವರು. ಸರ್ವೇಶ್ವರನಿಂದ ಹೊರಟ ಆ ಬೆಂಕಿಯ ನಿಮಿತ್ತ ನಿಮ್ಮ ಸೋದರರಾದ ಇಸ್ರಯೇಲ್ ಸಮಾಜದವರೇ ದುಃಖಿಸಲಿ.</verse>
				<verse number="7">ಸರ್ವೇಶ್ವರನ ಅಭಿಷೇಕತೈಲ ನಿಮ್ಮ ಮೇಲಿರುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು, ಹೋದರೆ ಸಾಯುವಿರಿ,” ಎಂದನು. ಮೋಶೆಯ ಮಾತಿನಂತೆಯೇ ಅವರು ನಡೆದುಕೊಂಡರು.</verse>
				<verse number="8">ಆರೋನನಿಗೆ, ಸರ್ವೇಶ್ವರ,</verse>
				<verse number="9">“ನೀನೂ ನಿನ್ನ ಪುತ್ರರು ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು, ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತ ನಿಯಮ.</verse>
				<verse number="10">ದೇವರಿಗೆ ಮೀಸಲಾದ ವಸ್ತ್ರಗಳಾವುವು; ಸಲ್ಲದ ವಸ್ತ್ರಗಳಾವುವು; ಶುದ್ಧ, ಆಶುದ್ಧವಾದುವುಗಳಾವುವು ಎಂಬುದನ್ನು ನೀವು ವಿವೇಚಿಸಬೇಕು.</verse>
				<verse number="11">ಸರ್ವೇಶ್ವರನಾದ ನಾನು ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಎಲ್ಲ ಆಜ್ಞೆಗಳನ್ನು ಜನರಿಗೆ ಬೋಧಿಸಬೇಕು. ಇದು ನಿಮ್ಮ ಕರ್ತವ್ಯ,” ಎಂದು ಹೇಳಿದರು.</verse>
				<verse number="12">ಮೋಶೆ ಆರೋನನಿಗೂ ಅವನ ಉಳಿದ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಅವರಿಗೆ ಹೀಗೆಂದು ಹೇಳಿದನು: “ಸರ್ವೇಶ್ವರನಿಗೆ ದಹನ ಬಲಿದಾನವಾಗಿ ಸಮರ್ಪಿತವಾದ ದ್ರವ್ಯಗಳಲ್ಲಿ ಮಿಕ್ಕಿರುವ ನೈವೇದ್ಯ ದ್ರವ್ಯವನ್ನು ತೆಗೆದುಕೊಂಡು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ ಬಲಿಪೀಠದ ಬಳಿಯಲ್ಲಿ ಊಟಮಾಡಿ.</verse>
				<verse number="13">ಅದು ಮಹಾಪರಿಶುದ್ಧವಾಗಿರುವುದರಿಂದ ಪವಿತ್ರ ಸ್ಥಳದೊಳಗೇ ಅದನ್ನು ಊಟಮಾಡಿ. ಜನರು ಸರ್ವೇಶ್ವರನಿಗೆ ಸಮರ್ಪಿಸುವ ಹೋಮದ್ರವ್ಯಗಳಲ್ಲಿ ಅದು ನಿಮಗೂ ನಿಮ್ಮ ಮಕ್ಕಳಿಗೂ ಸಲ್ಲತಕ್ಕದೆಂದು ಅಪ್ಪಣೆಯಾಗಿದೆ.</verse>
				<verse number="14">ನೀವು ಯಾಜಕನಿಗೆಂದೇ ಪ್ರತ್ಯೇಕವಾಗಿ ಆರತಿಯೆತ್ತಿ ಅರ್ಪಿಸಿದ ಎದೆಯ ಭಾಗವನ್ನು ಮತ್ತು ತೊಡೆಯನ್ನು ಯಾವುದಾದರೂ ಒಂದು ಶುದ್ಧ ಸ್ಥಳದಲ್ಲಿ ಊಟಮಾಡಬಹುದು. ನೀವೂ ನಿಮ್ಮ ಕುಟುಂಬದವರು ಅದನ್ನು ತಿನ್ನಬಹುದು. ಏಕೆಂದರೆ, ಇಸ್ರಯೇಲರು ಸಮರ್ಪಿಸುವ ಶಾಂತಿಸಮಾಧಾನದ ಬಲಿದ್ರವ್ಯಗಳಲ್ಲಿ ಇವು ನಿಮಗೂ ನಿಮ್ಮ ಮಕ್ಕಳಿಗೂ ಸಲ್ಲಬೇಕೆಂದು ನೇಮಕವಾಗಿದೆ.</verse>
				<verse number="15">ಜನರು ಹೋಮಕ್ಕಾಗಿ ಕೊಬ್ಬನ್ನು ತಂದು ಸಮರ್ಪಿಸುವಾಗಲೆಲ್ಲಾ ಯಾಜಕರಿಗಾಗಿ ಪ್ರತ್ಯೇಕಿಸಿ ಆರತಿಯೆತ್ತಿ ಸಮರ್ಪಿಸುವ ಆ ಎದೆಯ ಭಾಗವನ್ನು, ತೊಡೆಯನ್ನು ಸರ್ವೇಶ್ವರನ ಸನ್ನಿಧಿಗೆ ತರಬೇಕು. ಸರ್ವೇಶ್ವರನ ಆಜ್ಞಾನುಸಾರ ಅವು ನಿಮಗೂ ನಿಮ್ಮ ವಂಶಜರಿಗೂ ಸಲ್ಲತಕ್ಕದ್ದು. ಇದು ಶಾಶ್ವತ ನಿಯಮ,” ಎಂದು ಹೇಳಿದನು.</verse>
				<verse number="16">ಜನರೆಲ್ಲರ ದೋಷಪರಿಹಾರಕ್ಕಾಗಿ ಸಮರ್ಪಿತವಾದ ಹೋತದ ಬಗ್ಗೆ ಅದು ಏನಾಯಿತೆಂದು ಮೋಶೆ ವಿಚಾರಿಸಿದಾಗ ಅದನ್ನು ಸುಟ್ಟುಬಿಟ್ಟರೆಂದು ತಿಳಿದುಬಂದಿತು. ಇದನ್ನು ಕೇಳಿ ಮೋಶೆ, ಆರೋನನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರ ಮೇಲೆ ಸಿಟ್ಟುಗೊಂಡನು.</verse>
				<verse number="17">“ಆ ದೋಷಪರಿಹಾರಕ ಬಲಿ ಮಹಾಪರಿಶುದ್ಧವಾದುದಲ್ಲವೆ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆ, ಅವರ ಪರವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷನಿವಾರಿಸುವಂತೆ, ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲವೆ? ಅದನ್ನೇಕೆ ನೀವು ಪರಿಶುದ್ಧ ಸ್ಥಳದಲ್ಲಿ ತಿನ್ನಲಿಲ್ಲ?</verse>
				<verse number="18">ಅದರ ರಕ್ತವನ್ನು ಪವಿತ್ರಸ್ಥಾನದೊಳಕ್ಕೆ ತರಲಿಲ್ಲವಾದ ಕಾರಣ ನಾನು ಆಜ್ಞಾಪಿಸಿದಂತೆ ನೀವು ಅದರ ಮಾಂಸವನ್ನು ದೇವಸ್ಥಾನದ ಪ್ರಾಕಾರದೊಳಗೆ ತಿನ್ನಬೇಕಾಗಿತ್ತು,” ಎಂದನು.</verse>
				<verse number="19">ಅದಕ್ಕೆ ಆರೋನನು ಮೋಶೆಗೆ, “ಇವರು ಈ ದಿನ ಸರ್ವೇಶ್ವರನ ಸನ್ನಿಧಿಯಲ್ಲಿ ತಮಗೋಸ್ಕರ ದೋಷಪರಿಹಾರಕ ಬಲಿಯನ್ನು ಹಾಗು ದಹನ ಬಲಿಯನ್ನು ಸಮರ್ಪಿಸಿದ್ದರೂ ಈ ಆಪತ್ತು ನನಗೆ ಸಂಭವಿಸಿತು; ಹೀಗಿರುವಲ್ಲಿ ನಾನು ದೋಷಪರಿಹಾರಕ ಬಲಿಮಾಂಸವನ್ನು ಈ ದಿನ ಊಟಮಾಡಿದ್ದರೆ ಅದು ಸರ್ವೇಶ್ವರನಿಗೆ ಸರಿದೋರುತ್ತಿತ್ತೆ?” ಎಂದು ಉತ್ತರಕೊಟ್ಟನು.</verse>
				<verse number="20">ಆರೋನನ ಈ ಮಾತು ಮೋಶೆಗೆ ತೃಪ್ತಿ ತಂದಿತು.</verse>
			</chapter>
			<chapter number="11">
				<verse number="1">ಸರ್ವೇಶ್ವರ ಮೋಶೆ ಮತ್ತು ಆರೋನರ ಸಂಗಡ ಮಾತಾಡಿ ಹೀಗೆಂದು ಆಜ್ಞಾಪಿಸಿದರು:</verse>
				<verse number="2">“ನೀವು ಇಸ್ರಯೇಲರಿಗೆ ತಿಳಿಸಬೇಕಾದ ವಿಷಯಗಳು ಇವು -</verse>
				<verse number="3">ಭೂಮಿಯ ಮೇಲಿರುವ ಚತುಷ್ಪಾದ ಪ್ರಾಣಿಗಳಲ್ಲಿ ಈ ಕೆಳಕಂಡವುಗಳ ಮಾಂಸವನ್ನು ನೀವು ತಿನ್ನಬಹುದು: ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ ಅದು ಮೆಲುಕು ಹಾಕುವಂಥದಾದರೆ ಅದರ ಮಾಂಸವನ್ನು ತಿನ್ನಬಹುದು.</verse>
				<verse number="4">ಆದರೆ ಯಾವ ಪ್ರಾಣಿ ಮೆಲುಕು ಹಾಕಿದರೂ ಗೊರಸು ಸೀಳಿರುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ ಒಂಟೆ ಮೆಲುಕುಹಾಕುವಂಥದ್ದಾದರೂ ಅದಕ್ಕೆ ಸೀಳು ಗೊರಸು ಇಲ್ಲ. ಆದುದರಿಂದ ನೀವು ಅದರ ಮಾಂಸವನ್ನು ಅಶುದ್ಧವೆಂದು ತಿಳಿಯಬೇಕು.</verse>
				<verse number="5">(ಬಿಲದ ಮೊಲ ಮೆಲುಕುಹಾಕುವಂಥದ್ದು; ಆದರೂ ಸೀಳು ಗೊರಸು ಇಲ್ಲವಾದ್ದರಿಂದ ಅದು ನಿಮಗೆ ಅಶುದ್ಧ.</verse>
				<verse number="6">ಮೊಲ ಮೆಲುಕುಹಾಕುವಂಥದ್ದು; ಆದರೂ ಸೀಳುಗೊರಸು ಇಲ್ಲವಾದ ಕಾರಣ ಅದು ನಿಮಗೆ ಅಶುದ್ಧ.)</verse>
				<verse number="7">ಹಂದಿಯ ಗೊರಸು ಸೀಳಿದೆ. ಆದರೂ ಅದು ಮೆಲುಕು ಹಾಕುವುದಿಲ್ಲ. ಆದ್ದರಿಂದ ಅದು ನಿಮಗೆ ಅಶುದ್ಧ.</verse>
				<verse number="8">ಇಂಥವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣವನ್ನು ಮುಟ್ಟಬಾದರು. ಅವುಗಳನ್ನು ಅಶುದ್ಧವೆಂದೆಣಿಸಬೇಕು.</verse>
				<verse number="9">ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ - ಸಮುದ್ರದಲ್ಲಿಯಾಗಲಿ, ನದಿಯಲ್ಲಿಯಾಗಲಿ, ಬೇರೆ ಜಲಾಶಯದಲ್ಲಿಯಾಗಲಿ, ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆಯಾಗಿರುವುದೋ ಅದರ ಮಾಂಸವನ್ನು ತಿನ್ನಬಹುದು.</verse>
				<verse number="10">ಆದರೆ ಸಮುದ್ರದಲ್ಲಿದ್ದರೂ ನದಿಯಲ್ಲಿದ್ದರೂ ಜಲಚರಗಳಾದ ಸಕಲವಿಧವಾದ ಜೀವಜಂತುಗಳಲ್ಲಿ ಯಾವ ಜಾತಿಗೆ ರೆಕ್ಕೆಯೂ ಪರೆಪರೆಯಾದ ಮೈಯೂ ಇರುವುದಿಲ್ಲವೋ ಅದು ನಿಮಗೆ ನಿಷಿದ್ಧವಾದದ್ದು.</verse>
				<verse number="11">ಅಂಥವು ಸಂಪೂರ್ಣವಾಗಿ ನಿಷಿದ್ಧವಾಗಿರುವುದರಿಂದ ಅವುಗಳ ಮಾಂಸವನ್ನು ನೀವು ತಿನ್ನಬಾರದು; ಅವುಗಳ ಹೆಣಗಳು ನಿಮಗೆ ಹೇಯವಾಗಿರಬೇಕು.</verse>
				<verse number="12">ಜಲಜಂತುಗಳಲ್ಲಿ ಯಾವುದಕ್ಕೆ ರೆಕ್ಕೆಗಳೂ ಪರೆಪರೆಯಾದ ಮೈಯೂ ಇಲ್ಲವೋ ಅವು ನಿಮಗೆ ಹೇಯವಾಗಿರಬೇಕು.</verse>
				<verse number="13">ಪಕ್ಷಿಗಳಲ್ಲಿ ಇವುಗಳು ನಿಮಗೆ ನಿಷಿದ್ಧವು; ಗರುಡ, ಬೆಟ್ಟದ ಹದ್ದು,</verse>
				<verse number="14">ಕ್ರೌಂಚ, ಹದ್ದು,</verse>
				<verse number="15">ಸಕಲ ವಿಧವಾದ ಗಿಡಗ, ಎಲ್ಲಾ ವಿಧವಾದ ಕಾಗೆ,</verse>
				<verse number="16">ಉಷ್ಟ್ರಪಕ್ಷಿ, ಉಲೂಕ, ಕಡಲ ಹಕ್ಕಿ,</verse>
				<verse number="17">ಸಕಲ ವಿಧವಾದ ಡೇಗೆ, ಗೂಬೆ, ಹೆಗ್ಗೂಬೆ, ಕರೇಟು,</verse>
				<verse number="18">ಚೀಲಮೂಗಿ, ರಣಹದ್ದು, ನೀರು ಕಾಗೆ, ಕೊಕ್ಕರೆ,</verse>
				<verse number="19">ಎಲ್ಲ ವಿಧವಾದ ಬಕ, ಹೆಡೆ ಹಕ್ಕಿ, ಕಣ್ಣಕಪಡಿ, ಇವುಗಳ ಮಾಂಸವನ್ನು ತಿನ್ನಬಾರದು; ಇವು ಹೇಯವಾಗಿರಬೇಕು.</verse>
				<verse number="20">ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಕ್ರಿಮಿಕೀಟಗಳೆಲ್ಲವೂ ನಿಮಗೆ ಹೇಯವಾಗಿರಬೇಕು.</verse>
				<verse number="21">ಆದರೆ ಕಾಲುಳ್ಳ ಯಾವ ಕ್ರಿಮಿಕೀಟಗಳಿಗೆ ನೆಲದ ಮೇಲೆ ಹಾರುವುದಕ್ಕೋಸ್ಕರ ಮುದುರಿಕೊಂಡಿರುವ ತೊಡೆಗಳು ಇರುತ್ತವೆಯೋ ಅವುಗಳನ್ನು ನೀವು ತಿನ್ನಬಹುದು.</verse>
				<verse number="22">ಸಕಲವಿಧವಾದ ಮಿಡತೆಗಳನ್ನೂ, ಬೋಳ ಮಿಡತೆಗಳನ್ನೂ, ಜಿಟ್ಟಿ ಮಿಡತೆಗಳನ್ನೂ, ಸಣ್ಣ ಮಿಡತೆಗಳನ್ನೂ ಇವುಗಳನ್ನೆಲ್ಲಾ ತಿನ್ನಬಹುದು.</verse>
				<verse number="23">ರೆಕ್ಕೆಯುಳ್ಳವುಗಳಾಗಿ ಕಾಲುಗಳಿಂದ ಹರಿದಾಡುವ ಸಕಲ ವಿಧವಾದ ಕ್ರಿಮಿಕೀಟಗಳು ನಿಮಗೆ ನಿಷಿದ್ಧವು.</verse>
				<verse number="24">ಇದಲ್ಲದೆ ಈ ಕೆಳಗೆ ಹೇಳಿರುವ ಜಂತುಗಳಿಂದ ನಿಮಗೆ ಅಪವಿತ್ರತೆಯುಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.</verse>
				<verse number="25">ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು, ಮತ್ತು ಸಾಂಯಂಕಾಲದವರೆಗೂ ಅಶುದ್ಧನಾಗಿರುವನು.</verse>
				<verse number="26">ಅವು ಯಾವುವೆಂದರೆ, ಯಾವ ಪ್ರಾಣಿ ಗೊರಸು ಸ್ವಲ್ಪ ಸೀಳಿದ್ದರೂ ಇಗ್ಗೊರಸಾಗಿಲ್ಲವೋ ಮತ್ತು ಮೆಲುಕು ಹಾಕುವುದಿಲ್ಲವೋ ಅದು ನಿಮಗೆ ಅಶುದ್ಧ. ಅವುಗಳು ಯಾವನಿಗೆ ಸೋಂಕುವುವೋ ಅವನು ಅಶುದ್ಧನಾಗುವನು.</verse>
				<verse number="27">ಚತುಷ್ಪಾದ ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವುವುಗಳೆಲ್ಲಾ ನಿಮಗೆ ಅಶುದ್ಧವಾಗಿರುವುವು. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.</verse>
				<verse number="28">ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ.</verse>
				<verse number="29">ನೆಲದ ಮೇಲೆ ಸಂಚರಿಸುವ ಸಣ್ಣ ಜಂತುಗಳಲ್ಲಿ ಇವು ನಿಮಗೆ ಅಶುದ್ಧವಾಗಿರಬೇಕು: ಯಾವುವೆಂದರೆ - ಮುಂಗುಸಿ, ಇಲಿ, ಸಕಲವಿಧವಾದ ಉಡ, ಹಾವುರಾಣಿ,</verse>
				<verse number="30">ಊಸುರುವಳ್ಳಿ, ಹಲ್ಲಿ, ಬಸವನಹುಳ, ಚಿಟ್ಟಿಲಿ ಇವೇ.</verse>
				<verse number="31">ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವು ಯಾರಿಗೆ ಸೋಂಕುವುದೋ ಅವರು ಸಾಯಂಕಾಲದವರೆಗೂ ಅಶುದ್ಧರಾಗಿರುವರು.</verse>
				<verse number="32">ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವುದೋ ಆ ವಸ್ತು ಅಶುದ್ಧವಾಗಿರುವುದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ ಚರ್ಮವಾಗಲಿ ಗೋಣಿಯಾಗಲಿ ಅದು ಎಂಥದಾದರೂ ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಸಾಯಂಕಾಲದವರೆಗೂ ಅಶುದ್ಧವಾಗಿರುವುದು; ತರುವಾಯ ಶುದ್ಧಿಯಾಗುವುದು.</verse>
				<verse number="33">ಆ ಜಂತುಗಳ ಹೆಣ ಮಣ್ಣಿನ ಪಾತ್ರೆಯಲ್ಲಿ ಬಿದ್ದರೆ ಆ ಪಾತ್ರೆಯಲ್ಲಿರುವುದೆಲ್ಲಾ ಅಶುದ್ಧವಾಗಿರುವುದು. ಮತ್ತು ಆ ಪಾತ್ರೆಯನ್ನು ನೀವು ಒಡೆದುಬಿಡಬೇಕು.</verse>
				<verse number="34">ಅದರಲ್ಲಿರುವ ತಿನ್ನತಕ್ಕ ಪದಾರ್ಥವೆಲ್ಲಾ ನೀರಿನಿಂದ ನೆನದದ್ದಾಗಿದ್ದರೆ ಅಶುದ್ಧವಾಗುವುದು. ಪಾನದ್ರವ್ಯವು ಆ ಪಾತ್ರೆಯಲ್ಲಿದ್ದರೆ ಅದೂ ಅಶುದ್ಧವಾಗುವುದು.</verse>
				<verse number="35">ಆ ಜಂತುಗಳ ಹೆಣ ಯಾವ ವಸ್ತುಗಳ ಮೇಲೆ ಬಿದ್ದರೂ ಆ ವಸ್ತು ಅಶುದ್ಧವಾಗುವುದು. ಒಲೆಗಳಲ್ಲಿ ಅದು ಒಂಟಿ ಒಲೆಯಾಗಿದ್ದರೂ ಜೋಡಿ ಒಲೆಯಾಗಿದ್ದರೂ ಅದು ಅಶುದ್ಧವಾದುದರಿಂದ ಅದನ್ನು ಒಡೆದುಬಿಡಬೇಕು. ಅದು ಅಶುದ್ಧವೇ.</verse>
				<verse number="36">ಒರತೆ ಮೊದಲಾದ ಜಲಾಶಯಗಳನ್ನು ಮಾತ್ರ ನೀವು ಶುದ್ಧವೆಂದೆಣಿಸಬೇಕು. ಆದರೆ ಇವುಗಳೊಳಗಿಂದ ಆ ಹೆಣವನ್ನು ಎತ್ತಿದವನು ಅಶುದ್ಧನಾಗುವನು.</verse>
				<verse number="37">ಬಿತ್ತಬೇಕಾದ ಬೀಜದ ಮೇಲೆ ಈ ಜಂತುಗಳ ಹೆಣ ಬಿದ್ದರೆ ಆ ಬೀಜವು ಅಶುದ್ಧವಾಗುವುದಿಲ್ಲ.</verse>
				<verse number="38">ನೀರು ಹಾಕಿ ನೆನಸಿದ ಬೀಜದ ಮೇಲೆ ಆ ಹೆಣ ಬಿದ್ದರೆ ಅದು ನಿಮಗೆ ಅಶುದ್ಧ.</verse>
				<verse number="39">ಆಹಾರಕ್ಕೆ ಯೋಗ್ಯವಾಗಿರುವ ಪ್ರಾಣಿ ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.</verse>
				<verse number="40">ಆ ಹೆಣದಲ್ಲಿ ಸ್ವಲ್ಪ ತಿಂದವನು ಸಹ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು.</verse>
				<verse number="41">ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೆಲ್ಲಾ ಹೇಯವಾಗಿವೆ; ಅವುಗಳ ಮಾಂಸವನ್ನು ತಿನ್ನಬಾರದು.</verse>
				<verse number="42">ಹೊಟ್ಟೆಯಿಂದ ನಡೆಯುವಂಥದನ್ನೂ ಕಾಲಿನಿಂದ ಹರಿದಾಡುವಂಥದನ್ನೂ ಬಹಳ ಕಾಲುಳ್ಳದ್ದನ್ನೂ ಅಂತೂ ನೆಲದ ಮೇಲೆ ಹರಿದಾಡುವ ಯಾವ ಸಣ್ಣ ಜೀವಿಯನ್ನೂ ನೀವು ತಿನ್ನಬಾರದು; ಅವು ಹೇಯವಾಗಿವೆ.</verse>
				<verse number="43">ನೀವು ಅಂತ ಯಾವ ಸಣ್ಣ ಜೀವಿಯನ್ನೂ ತಿಂದು ನಿಮ್ಮನ್ನು ನೀವೇ ಹೇಸಿಕೆಮಾಡಿಕೊಂಡು ಅಶುದ್ಧರಾಗಬಾರದು.</verse>
				<verse number="44">ಏಕೆಂದರೆ ನಾನು ನಿಮ್ಮ ದೇವರಾದ ಸರ್ವೇಶ್ವರ; ನೀವು ದೇವಜನರಿಗೆ ತಕ್ಕಂತಿರಬೇಕು. ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.</verse>
				<verse number="45">ನಿಮ್ಮ ದೇವರಾಗಿರುವುದಕ್ಕೆ ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದ ಸರ್ವೇಶ್ವರ ನಾನು; ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.</verse>
				<verse number="46">ಇದೇ ಪಶು, ಪಕ್ಷಿ, ಜಲಚರ ಹಾಗು ಕ್ರಿಮಿಕೀಟಗಳ ವಿಷಯವಾದ ವಿಧಿ.</verse>
				<verse number="47">ಇದರಿಂದ ಶುದ್ಧಾಶುದ್ಧಗಳನ್ನೂ, ಭಕ್ಷ್ಯಾಭಕ್ಷ್ಯಗಳನ್ನೂ ವಿವೇಚಿಸುವುದಕ್ಕೆ ನಿಮ್ಮಿಂದಾಗುವುದು</verse>
			</chapter>
			<chapter number="12">
				<verse number="1">ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದು ಹೇಳಿದರು:</verse>
				<verse number="2">“ನೀನು ಇಸ್ರಯೇಲರಿಗೆ ಇಂತೆಂದು ಆಜ್ಞಾಪಿಸು - ‘ಒಬ್ಬ ಮಹಿಳೆ ಗಂಡುಮಗುವನ್ನು ಹೆತ್ತರೆ ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುತ್ತಾಳೋ ಹಾಗೆಯೇ ಏಳು ದಿನಗಳ ತನಕ ಅಶುದ್ಧಳಾಗಿರಬೇಕು.</verse>
				<verse number="3">ಎಂಟನೆಯ ದಿನ ಆ ಮಗುವಿಗೆ ಸುನ್ನತಿ ಮಾಡಿಸಬೇಕು.</verse>
				<verse number="4">ಆಮೇಲೆ ಆಕೆ ಪೂರ್ಣಶುದ್ಧಳಾಗಲು ಮೂವತ್ತುಮೂರು ದಿನಗಳವರೆಗೆ ಕಾದಿರಬೇಕು. ಅದು ಮುಗಿಯುವ ತನಕ ಆಕೆ ದೇವರ ವಸ್ತುಗಳನ್ನು ಮುಟ್ಟಕೂಡದು, ದೇವಸ್ಥಾನಕ್ಕೆ ಬರಕೂಡದು.</verse>
				<verse number="5">ಹೆಣ್ಣುಮಗುವನ್ನು ಹೆತ್ತರೆ, ತಾನು ತಿಂಗಳ ಮುಟ್ಟಿನಿಂದ ಹೇಗೆ ಅಶುದ್ಧಳಾಗುತ್ತಾಳೋ ಹಾಗೆಯೇ ಎರಡು ವಾರಗಳು ಅಶುದ್ಧಳಾಗಿರಬೇಕು; ಮತ್ತು ಪೂರ್ಣಶುದ್ಧಳಾಗಲು ಅರವತ್ತಾರು ದಿನಗಳು ಕಾದಿರಬೇಕು.</verse>
				<verse number="6">ಗಂಡುಮಗುವನ್ನು ಹೆತ್ತರೂ ಹೆಣ್ಣುಮಗುವನ್ನು ಹೆತ್ತರೂ ಆಕೆಯ ಶುದ್ಧೀಕರಣ ದಿನಗಳು ಮುಗಿದಾಗ ಆಕೆ ದಹನಬಲಿಗಾಗಿ ಒಂದು ವರ್ಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಒಂದು ಮರಿ ಪಾರಿವಾಳವನ್ನು, ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.</verse>
				<verse number="7">ಯಾಜಕನು ಅವುಗಳನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿ ಅವಳ ಪರವಾಗಿ ದೋಷಪರಿಹಾರ ಮಾಡಿದಾಗ ಅವಳಿಗೆ ರಕ್ತಸ್ರಾವದಿಂದ ಆದ ಅಪರಿಶುದ್ಧತೆ ನಿವಾರಣೆಯಾಗಿ ಶುದ್ಧಳಾಗುವಳು. ಗಂಡು ಮಗು ಹೆತ್ತಾಗಲು, ಹೆಣ್ಣು ಮಗು ಹೆತ್ತಾಗಲು ಅನುಸರಿಸಬೇಕಾದ ವಿಧಿ ಒಂದೇ.</verse>
				<verse number="8">ಬಡತನದ ನಿಮಿತ್ತ ಕುರಿಯನ್ನು ಕೊಡುವುದಕ್ಕೆ ಆಗದಿದ್ದರೆ ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಮರಿಪಾರಿವಾಳಗಳನ್ನಾಗಲಿ ತಂದು ದಹನಬಲಿಗಾಗಿ ಒಂದನ್ನು, ದೋಷಪರಿಹಾರಕ್ಕಾಗಿ ಒಂದನ್ನು ಸಮರ್ಪಿಸಬೇಕು. ಯಾಜಕನು ಅವಳ ಪರವಾಗಿ ದೋಷಪರಿಹಾರವನ್ನು ಮಾಡಿದಾಗ ಆಕೆ ಶುದ್ಧಳಾಗುವಳು.</verse>
			</chapter>
			<chapter number="13">
				<verse number="1">ಸರ್ವೇಶ್ವರ ಸ್ವಾಮಿ ಮೋಶೆ ಆರೋನರಿಗೆ ಹೇಳಿದ್ದೇನೆಂದರೆ;</verse>
				<verse number="2">ಒಬ್ಬ ವ್ಯಕ್ತಿಯ ಮೈಮೇಲೆ ಬಾವಾಗಲಿ ಗುಳ್ಳೆಯಾಗಲಿ, ಹೊಳೆಯುವ ಮಚ್ಚೆಯಾಗಲಿ ಕಾಣಿಸಿಕೊಂಡು ಅದರಲ್ಲಿ ಕುಷ್ಠರೋಗದ ಲಕ್ಷಣಗಳು ತೋರಿದರೆ ಅವನನ್ನು ಮಹಾಯಾಜಕ ಆರೋನನ ಬಳಿಗೆ, ಇಲ್ಲವೆ ಆರೋನನ ಮಕ್ಕಳಾದ ಯಾಜಕರಲ್ಲಿ ಒಬ್ಬನ ಬಳಿಗೆ ಕರೆದುಕೊಂಡು ಬರಬೇಕು.</verse>
				<verse number="3">ಯಾಜಕನು ಅವನ ಚರ್ಮದಲ್ಲಿರುವ ಮಚ್ಚೆಯನ್ನು ಪರೀಕ್ಷಿಸಬೇಕು. ಆ ಮಚ್ಚೆಯಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಮತ್ತು ಆ ಮಚ್ಚೆ ಮಿಕ್ಕ ಚರ್ಮಕ್ಕಿಂತ ತಗ್ಗಾಗಿದ್ದರೆ ಅದು ಕುಷ್ಠರೋಗ. ಯಾಜಕನು ಅದನ್ನು ಪರೀಕ್ಷಿಸಿ ಆ ವ್ಯಕ್ತಿಯನ್ನು ಅಶುದ್ಧನೆಂದು ನಿರ್ಣಯಿಸಬೇಕು.</verse>
				<verse number="4">ಆ ಹೊಳೆಯುವ ಮಚ್ಚೆ ಬೆಳ್ಳಗಾಗಿದ್ದು ಮಿಕ್ಕ ಚರ್ಮಕ್ಕಿಂತ ತಗ್ಗಾಗಿರದೆ ಹೋದರೆ ಮತ್ತು ಅಲ್ಲಿರುವ ರೋಮ ಬೆಳ್ಳಗಾಗಿದ್ದರೆ ಯಾಜಕನು ಆ ಮಚ್ಚೆಯಿದ್ದವನನ್ನು ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇರಿಸಬೇಕು.</verse>
				<verse number="5">ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊದಲು ಇದ್ದಂತೆಯೇ ತೋರಿದರೆ ಯಾಜಕನು ಇನ್ನು ಏಳು ದಿನಗಳವರೆಗೂ ಅವನನ್ನು ಪ್ರತ್ಯೇಕವಾಗಿ ಇರಿಸಬೇಕು.</verse>
				<verse number="6">ಆ ಏಳು ದಿನಗಳಾದ ಮೇಲೆ ಯಾಜಕನು ಮತ್ತೆ, ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊಬ್ಬಾಗಿದ್ದರೆ ಯಾಜಕನು ಅದು ಕೇವಲ ಗುಳ್ಳೆಯೆಂದು ತಿಳಿದು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.</verse>
				<verse number="7">ಆದರೆ ಅವನು ತನ್ನ ಶುದ್ಧಿಯ ವಿಷಯದಲ್ಲಿ ತನ್ನನ್ನು ಯಾಜಕನಿಗೆ ತೋರಿಸಿಕೊಂಡ ನಂತರ ಆ ಗುಳ್ಳೆ ದೇಹದ ಚರ್ಮದಲ್ಲಿ ಹರಡಿಕೊಂಡರೆ ಅವನು ಪುನಃ ಯಾಜಕನಿಗೆ ತೋರಿಸಿಕೊಳ್ಳಬೇಕು.</verse>
				<verse number="8">ಯಾಜಕನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠವೆಂದು ತಿಳಿದು ಆ ವ್ಯಕ್ತಿಯನ್ನು ಅಶುದ್ಧನೆಂದು ನಿರ್ಣಯಿಸಬೇಕು.</verse>
				<verse number="9">ಕುಷ್ಠರೋಗದ ಚಿಹ್ನೆಗಳು ಯಾವ ವ್ಯಕ್ತಿಯಲ್ಲಾದರೂ ಕಾಣಬಂದರೆ ಅವನನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು.</verse>
				<verse number="10">ಯಾಜಕನು ಅವನನ್ನು ಪರೀಕ್ಷಿಸುವಾಗ ದೇಹದ ಚರ್ಮದಲ್ಲಿ ಬೆಳ್ಳಗಾದ ಬಾವು ಇದ್ದರೆ ಮತ್ತು ಬಾವಿನಲ್ಲಿ ಮಾಂಸ ಕಾಣಿಸಿದರೆ</verse>
				<verse number="11">ಅದು ಹಳೇ ಕುಷ್ಠರೋಗದ ಗುರುತು. ಅವನು ಅಶುದ್ಧನಾದ್ದರಿಂದ ಯಾಜಕನು ಅವನನ್ನು ಪ್ರತ್ಯೇಕಿಸದೆ ಆಗಲೇ ಅಶುದ್ಧನೆಂದು ನಿರ್ಣಯಿಸಬೇಕು.</verse>
				<verse number="12">ಆದರೆ ಒಬ್ಬ ವ್ಯಕ್ತಿಯ ಚರ್ಮದಲ್ಲಿ ತೊನ್ನು ಹತ್ತಿ ಯಾಜಕನು ನೋಡುವ ಎಲ್ಲಾ ಕಡೆಯಲ್ಲಿಯೂ ತಲೆ ಮೊದಲುಗೊಂಡು ಅಂಗಾಲಿನವರೆಗೂ ಹರಡಿಕೊಂಡಿದ್ದರೆ ಯಾಜಕನು ನೋಡುವಾಗ</verse>
				<verse number="13">ಆ ತೊನ್ನು ದೇಹದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರೆ ಅಂಥವನನ್ನು ಶುದ್ಧನೆಂದು ಯಾಜಕನು ನಿರ್ಣಯಿಸಬೇಕು. ಅವನ ಚರ್ಮವೆಲ್ಲಾ ಬೆಳ್ಳಗಾಗಿ ಹೋದುದರಿಂದ ಅವನು ಶುದ್ಧನು.</verse>
				<verse number="14">ಆದರೆ ಅಂಥವನ ದೇಹದಲ್ಲಿ ಯಾವಾಗಲಾದರೂ ಮಾಂಸ ಕಾಣಬಂದರೆ ಅವನು ಅಶುದ್ಧನಾಗುವನು.</verse>
				<verse number="15">ಯಾಜಕನು ಆ ಮಾಂಸವನ್ನು ನೋಡಿ ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು. ಅಂಥ ಮಾಂಸವು ಅಶುದ್ಧವೇ ಸರಿ, ಅದು ಕುಷ್ಠವು.</verse>
				<verse number="16">ಆದರೆ ಆ ಮಾಂಸವು ಅದೇ ಪ್ರಕಾರವಾಗಿ ಇರದೆ ತಿರಿಗಿ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು.</verse>
				<verse number="17">ಯಾಜಕನು ಪರೀಕ್ಷಿಸುವಾಗ ಆ ಮಚ್ಚೆ ಬೆಳ್ಳಗಾಗಿ ಹೋಗಿದ್ದರೆ ಆ ವ್ಯಕ್ತಿಯನ್ನು ಶುದ್ಧನೆಂದು ನಿರ್ಣಯಿಸಬೇಕು, ಅವನು ಶುದ್ಧನಾಗಿದ್ದಾನೆ.</verse>
				<verse number="18">ಒಬ್ಬನ ದೇಹದ ಚರ್ಮದಲ್ಲಿ ಹುಣ್ಣು ಆಗಿದ್ದು</verse>
				<verse number="19">ವಾಸಿಯಾದ ಮೇಲೆ ಅದು ಇದ್ದ ಸ್ಥಳದಲ್ಲಿ ಬಿಳೀ ಬಾವಾಗಲಿ ಕೆಂಪು ಬಿಳುಪು ಮಿಶ್ರವಾಗಿ ಹೊಳೆಯುವ ಕಲೆಯಾಗಲಿ ಕಂಡುಬಂದರೆ ಅವನು ತನ್ನನ್ನು ಯಾಜಕನಿಗೆ ತೋರಿಸಿಕೊಳ್ಳಬೇಕು.</verse>
				<verse number="20">ಯಾಜಕನು ಪರೀಕ್ಷಿಸಿ ನೋಡುವಾಗ ಆ ಕಲೆ ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರಿದರೆ ಮತ್ತು ಅದರಲ್ಲಿರುವ ರೋಮ ಬೆಳ್ಳಗಾಗಿ ಹೋಗಿದ್ದರೆ ಆ ಹುಣ್ಣಿನಲ್ಲಿ ಕುಷ್ಠಹುಟ್ಟಿರುವುದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.</verse>
				<verse number="21">ಆದರೆ ಯಾಜಕನು ಪರೀಕ್ಷಿಸಿ ನೋಡುವಾಗ ಅದರಲ್ಲಿ ಬಿಳೀ ರೋಮವಿಲ್ಲದೆ ಹೋದರೆ ಮತ್ತು ಆ ಕಲೆ ಮಿಕ್ಕ ಚರ್ಮಕ್ಕಿಂತ ತಗ್ಗಾಗದೆ ಮೊಬ್ಬಾಗಿದ್ದರೆ ಯಾಜಕನು ಅವನನ್ನು ಏಳು ದಿನಗಳು ಪ್ರತ್ಯೇಕವಾಗಿ ಇರಿಸಬೇಕು.</verse>
				<verse number="22">ತರುವಾಯ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು; ಅದು ಕುಷ್ಠರೋಗವೇ ಸರಿ.</verse>
				<verse number="23">ಆದರೆ ಆ ಹೊಳೆಯುವ ಕಲೆ ಹರಡಿಕೊಳ್ಳದೆ ಮೊದಲಿದ್ದಂತೆಯೇ ಇದ್ದರೆ ಅದು ಆ ಹುಣ್ಣಿನ ಕಲೆಯೆಂದು ತಿಳಿದುಕೊಂಡು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.</verse>
				<verse number="24">ಒಬ್ಬ ವ್ಯಕ್ತಿಯ ಚರ್ಮದಲ್ಲಿ ಬೆಂಕಿಯಿಂದುಂಟಾದ ಬೊಬ್ಬೆ ಇರಲಾಗಿ ಆ ಬೊಬ್ಬೆಯ ಸ್ಥಳವು ಹೊಳೆಯುವ ಕಲೆಯಾಗಿ</verse>
				<verse number="25">ಬೆಳ್ಳಗಾಗಿಯಾಗಲಿ ಕೆಂಪು ಬಿಳುಪು ಮಿಶ್ರವಾಗಿಯಾಗಲಿ ಇದ್ದರೆ ಯಾಜಕನು ಅದನ್ನು ಪರೀಕ್ಷಿಸಿ ನೋಡಬೇಕು. ಅವನು ನೋಡುವಾಗ ಆ ಹೊಳೆಯುವ ಕಲೆಯಲ್ಲಿರುವ ರೋಮವು ಬೆಳ್ಳಗಾಗಿಹೋಗಿದ್ದರೆ ಮತ್ತು ಆ ಕಲೆಯು ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರಿದರೆ ಅದು ಆ ಬೊಬ್ಬೆಯಲ್ಲಿ ಹುಟ್ಟಿದ ಕುಷ್ಠವೆಂದು ತಿಳಿದು ಯಾಜಕನು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.</verse>
				<verse number="26">ಆದರೆ ಯಾಜಕನು ಪರೀಕ್ಷಿಸುವಾಗ ಆ ಹೊಳೆಯುವ ಕಲೆಯಲ್ಲಿ ಬಿಳೀ ರೋಮವಿಲ್ಲದೆ ಹೋದರೆ ಮತ್ತು ಅದು ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆ ಮೊಬ್ಬಾಗಿ ಹೋಗಿದ್ದರೆ ಯಾಜಕನು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.</verse>
				<verse number="27">ಏಳನೆಯ ದಿನದಲ್ಲಿ ಯಾಜಕನು ಅವನನ್ನು ನೋಡುವಾಗ ಅದು ಚರ್ಮದಲ್ಲಿ ಹರಡಿಕೊಂಡಿದ್ದರೆ ಅದು ಕುಷ್ಠರೋಗವೆಂದು ತಿಳಿದು ಅವನನ್ನು ಅಶುದ್ಧನೆಂದು ನಿರ್ಣಯಿಸಬೇಕು.</verse>
				<verse number="28">ಆ ಹೊಳೆಯುವ ಕಲೆಯು ಚರ್ಮದಲ್ಲಿ ಹರಡಿಕೊಳ್ಳದೆ ಮೊದಲಿನಂತೆಯೇ ಇದ್ದು ಮೊಬ್ಬಾಗಿಹೋಗಿದ್ದರೆ ಅದು ಬೆಂಕಿಸುಟ್ಟ ಬೊಬ್ಬೆಯೆಂದು ತಿಳಿದು ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.</verse>
				<verse number="29">ಹೆಂಗಸಿನ ತಲೆಯಲ್ಲಾಗಲಿ ಗಂಡಸಿನ ತಲೆಯಲ್ಲಿ ಅಥವಾ ಗಡ್ಡದಲ್ಲಾಗಲಿ ಕಲೆಯುಂಟಾದರೆ ಯಾಜಕನು ಅದನ್ನು ಪರೀಕ್ಷಿಸಿ ನೋಡಬೇಕು.</verse>
				<verse number="30">ಆಗ ಅದು ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರಿದರೆ ಮತ್ತು ಅದರಲ್ಲಿ ಹಳದಿಬಣ್ಣವುಳ್ಳ ಸಣ್ಣ ಕೂದಲು ಇದ್ದರೆ ಅದು ತಲೆಯಲ್ಲಾಗಲಿ ಗಡ್ಡದಲ್ಲಾಗಲಿ ಉಂಟಾದ ಕುಷ್ಠವನ್ನು ಸೂಚಿಸುವಂಥಾದ್ದು ಆಗಿರುವುದರಿಂದ ಯಾಜಕನು ಅಂಥವನನ್ನು ಅಶುದ್ಧನೆಂದು ನಿರ್ಣಯಿಸಬೇಕು..</verse>
				<verse number="31">ಯಾಜಕನು ಆ ಇಸಬನ್ನು ನೋಡುವಾಗ ಅದು ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆ ಹೋದಾಗ್ಯೂ ಅದು ಇರುವ ಕಡೆ ಕರೇಕೂದಲು ಇಲ್ಲದಿದ್ದರೆ ಯಾಜಕರು ಅವನನ್ನು ಏಳು ದಿನಗಳ ತನಕ ಪ್ರತ್ಯೇಕವಾಗಿ ಇರಿಸಬೇಕು.</verse>
				<verse number="32">ಏಳನೆಯ ದಿನದಲ್ಲಿ ಯಾಜಕನು ನೋಡುವಾಗ ಆ ಇಸುಬು ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಕಡೆ ಹಳದಿಬಣ್ಣದ ಕೂದಲು ಇಲ್ಲದಿದ್ದರೆ ಮತ್ತು ಅದು ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆಹೋದರೆ</verse>
				<verse number="33">ಅವನು ಕ್ಷೌರಮಾಡಿಸಿಕೊಳ್ಳಬೇಕು. ಆ ಇಸುಬು ಇರುವ ಭಾಗವನ್ನು ಮಾತ್ರ ಕ್ಷೌರಮಾಡಿಸಿಕೊಳ್ಳಬಾರದು. ಯಾಜಕನು ಅವನನ್ನು ಇನ್ನೂ ಏಳು ದಿನಗಳವರೆಗೂ ಪ್ರತ್ಯೇಕಿಸಬೇಕು.</verse>
				<verse number="34">ಏಳನೆಯ ದಿನದಲ್ಲಿ ಯಾಜಕನು ಪುನಃ ಆ ಇಸುಬನ್ನು ನೋಡುವಾಗ ಅದು ಚರ್ಮದಲ್ಲಿ ಹರಡಿಕೊಳ್ಳದೆ ಹೋಗಿದ್ದರೆ ಮಿಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆ ಹೋದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡಾಗ ಶುದ್ಧನಾಗುವನು.</verse>
				<verse number="35">ಆದರೆ ಅವನು ಶುದ್ಧನೆಂದು ನಿರ್ಣಯಿಸಲ್ಪಟ್ಟ ಮೇಲೆ ಆ ಇಸುಬು ಚರ್ಮದಲ್ಲಿ ಹರಡಿಕೊಂಡರೆ</verse>
				<verse number="36">ಯಾಜಕನು ಅವನನ್ನು ಪರೀಕ್ಷಿಸಬೇಕು; ಆದರೆ ಹಳದಿಬಣ್ಣದ ಕೂದಲು ಇದೆಯೋ ಇಲ್ಲವೋ ಎಂದು ನೋಡಬೇಕಾದ ಅಗತ್ಯವಿಲ್ಲ; ಅವನು ಅಶುದ್ಧನೇ.</verse>
				<verse number="37">ಇಸುಬು ಮೊದಲು ಇದ್ದಂತೆಯೇ ಇದ್ದಾದರಲ್ಲಿ ಕರೇ ಕೂದಲು ಹುಟ್ಟಿದರೆ ಅದು ವಾಸಿಯಾಗಿದೆ. ಅವನು ಶುದ್ಧನು; ಯಾಜಕರು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು.</verse>
				<verse number="38">ಗಂಡಸಿಗಾಗಲಿ ಹೆಂಗಸಿಗಾಗಲಿ ಚರ್ಮದಲ್ಲಿ ಹೊಳೆಯುವ ಬಿಳುಪಾದ ಕಲೆಗಳು ಅಲ್ಲಲ್ಲಿ ಹುಟ್ಟಿದ್ದರೆ</verse>
				<verse number="39">ಯಾಜಕನು ಅವುಗಳನ್ನು ಪರೀಕ್ಷಿಸಬೇಕು. ಆ ಹೊಳೆಯುವ ಕಲೆಗಳು ಮೊಬ್ಬಾದ ಬಿಳೀ ಬಣ್ಣವಾಗಿದ್ದರೆ ಅದು ದೇಹದ ಚರ್ಮದಲ್ಲಿ ಹುಟ್ಟಿದ ಚಿಬ್ಬು, ಅವನು ಶುದ್ಧನು.</verse>
				<verse number="40">ಒಬ್ಬ ವ್ಯಕ್ತಿಯ ತಲೆಯ ಕೂದಲು ಉದುರಿಹೋದುದರಿಂದ ಬೋಳುತಲೆಯವನಾದರೂ ಅವನು ಶುದ್ಧನೇ.</verse>
				<verse number="41">ಮುಂದಲೆಯ ಕೂದಲು ಉದುರಿದರೆ ಅವನು ಪಟ್ಟೆತಲೆಯವನಾದರೂ ಶುದ್ಧನೇ.</verse>
				<verse number="42">ಆದರೆ ಬೋಳುತಲೆಯಲ್ಲಾಗಲಿ, ಪಟ್ಟೆತಲೆಯಲ್ಲಾಗಲಿ ಕೆಂಪು ಬಿಳುಪು ಮಿಶ್ರವಾದ ಮಚ್ಚೆ ಹುಟ್ಟಿದರೆ ಅದು ಕುಷ್ಠವೇ.</verse>
				<verse number="43">ಯಾಜಕನು ಅವನನ್ನು ಪರೀಕ್ಷಿಸಬೇಕು. ಆಗ ಅದರಿಂದುಂಟಾದ ಬಾವು ಕೆಂಪು ಬಿಳುಪು ಮಿಶ್ರವಾಗಿ ಚರ್ಮದಲ್ಲಿನ ಕುಷ್ಠದಂತೆ ತೋರಿದರೆ ಅವನು ಕುಷ್ಠರೋಗಿ; ಅಶುದ್ಧನು.</verse>
				<verse number="44">ಅವನ ತಲೆಯ ಮೇಲೆ ಕುಷ್ಠದ ಗುರುತು ಕಾಣಿಸಿದ್ದರಿಂದ ಅವನು ಅಶುದ್ಧನೆಂದು ಯಾಜಕನು ನಿರ್ಣಯಿಸಬೇಕು.</verse>
				<verse number="45">ಯಾರಲ್ಲಿ ಕುಷ್ಠದ ಗುರುತು ಕಾಣಬಂತೋ ಆ ವ್ಯಕ್ತಿ ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯನ್ನು ಕೆದರಿಕೊಂಡು ಬಾಯಿಯನ್ನು ಬಟ್ಟೆಯಿಂದ ಮುಚ್ಚಿಕೊಂಡು - ‘ನಾನು ಅಶುದ್ದನು, ಅಶುದ್ಧನು’ ಎಂದು ಕೂಗಿಕೊಳ್ಳಬೇಕು.</verse>
				<verse number="46">ಆ ರೋಗದ ಗುರುತುಗಳು ಅವನಲ್ಲಿ ಇರುವ ದಿನಗಳೆಲ್ಲಾ ಅವನು ಅಶುದ್ಧನಾಗಿರುವನು. ಅವನು ಅಶುದ್ಧನಾದುದರಿಂದ ಪ್ರತ್ಯೇಕವಾಗಿಯೇ ವಾಸವಾಗಿರಬೇಕು; ಅವನ ನಿವಾಸ ಪಾಳೆಯದ ಹೊರಗೆ ಇರಬೇಕು.</verse>
				<verse number="47">ಕುಷ್ಠರೋಗದ ಗುರುತು ಬಟ್ಟೆಯಲ್ಲಿ ಕಂಡುಬಂದಾಗ ಅದು ಉಣ್ಣೆಯ ಬಟ್ಟೆಯಾಗಲಿ, ನಾರಿನ ಬಟ್ಟೆಯಾಗಲಿ,</verse>
				<verse number="48">ನಾರಿನ ಅಥವಾ ಉಣ್ಣೆಯ ನೆಯಿಗೆಯಲ್ಲಾಗಲಿ, ಹೆಣಿಗೆಯಲ್ಲಾಗಲಿ, ಇಲ್ಲವೆ ತೊಗಲಿನಲ್ಲಾಗಲಿ, ತೊಗಲಿನಿಂದ ಮಾಡಲ್ಪಟ್ಟ ವಸ್ತುವಿನಲ್ಲಾಗಲಿ,</verse>
				<verse number="49">ಆ ಬಟ್ಟೆ ತೊಗಲು, ಹಾಸು, ಹೊಕ್ಕು, ತೊಗಲಿನ ಸಾಮಾನುಗಳಲ್ಲಿ ಹಸುರಾಗಿ ಇಲ್ಲವೆ ಕೆಂಪಾಗಿ ಮಚ್ಚೆಕಾಣಿಸಿದರೆ ಅದು ಕುಷ್ಠದ ಗುರುತು; ಅದನ್ನು ಯಾಜಕನಿಗೆ ತೋರಿಸಬೇಕು.</verse>
				<verse number="50">ಯಾಜಕನು ಅದನ್ನು ನೋಡಿ ಏಳು ದಿನಗಳವರೆಗೆ ಪ್ರತ್ಯೇಕವಾಗಿ ಇಡಿಸಬೇಕು.</verse>
				<verse number="51">ಏಳನೆಯ ದಿನದಲ್ಲಿ ಅವನು ಅದನ್ನು ನೋಡುವಾಗ ಆ ಬಟ್ಟೆಯ ನೆಯಿಗೆಯಲ್ಲಾಗಲಿ ಹೆಣಿಗೆಯಲ್ಲಾಗಲಿ ಇಲ್ಲವೇ ಯಾವುದಾದರೂ ಒಂದು ಕೆಲಸಕ್ಕೆ ಉಪಯೋಗವಾಗಿರುವ ಆ ತೊಗಲಿನಲ್ಲಿ ಆ ಮಚ್ಚೆ ಹರಡಿಕೊಂಡಿದ್ದರೆ ಅದು ಪ್ರಾಣಕ್ಕೆ ಅಪಾಯಕರವಾದ ಕುಷ್ಠವೇ; ಆ ವಸ್ತು ಅಶುದ್ಧ.</verse>
				<verse number="52">ಆ ವಸ್ತುವು ಬಟ್ಟೆಯಾದರೂ ನೆಯಿಗೆಯಾದರೂ ಹೆಣಿಗೆಯಾದರೂ ಉಣ್ಣೆಯದಾದರೂ ನಾರಿನದಾದರೂ ತೊಗಲಿನದಾದರೂ ಅದರಲ್ಲಿ ಪ್ರಾಣಕ್ಕೆ ಅಪಾಯಕರವಾದ ಕುಷ್ಠವಿರುವುದರಿಂದ ಅದನ್ನು ಬೆಂಕಿಯಿಂದ ಸುಡಿಸಿಬಿಡಬೇಕು.</verse>
				<verse number="53">ಆದರೆ ಯಾಜಕನು ಪರೀಕ್ಷಿಸುವಾಗ ಆ ವಸ್ತುವಿನಲ್ಲಿ ಅಂದರೆ ಆ ಬಟ್ಟೆ, ನೆಯಿಗೆ, ಹೆಣಿಗೆ, ತೊಗಲಿನ ಸಾಮಾನು ಇವುಗಳಲ್ಲಿ ಆ ಮಚ್ಚೆ ಹರಡಿಕೊಳ್ಳದಿದ್ದರೆ</verse>
				<verse number="54">ಅದನ್ನು ನೀರಿನಿಂದ ತೊಳೆಯಬೇಕೆಂದು ಯಾಜಕನು ಅಪ್ಪಣೆಕೊಟ್ಟು ಇನ್ನೂ ಏಳುದಿನಗಳ ತನಕ ಅದನ್ನು ಪ್ರತ್ಯೇಕವಾಗಿ ಇಡಿಸಬೇಕು.</verse>
				<verse number="55">ಆ ಮಚ್ಚೆ ಇದ್ದ ವಸ್ತುವನ್ನು ತೊಳೆಸಿದ ಮೇಲೆ ಯಾಜಕನು ನೋಡುವಾಗ ಆ ಮಚ್ಚೆಯು ಹರಡಿಕೊಳ್ಳದೆ ಇದ್ದಾಗ್ಯೂ ಅದರ ಬಣ್ಣ ಮೊದಲಿದ್ದಂತೆಯೇ ಇದ್ದರೆ ಆ ವಸ್ತು ಅಶುದ್ಧ. ಕುಷ್ಠರೋಗದ ಗುರುತು ಅದರ ಮೇಲಿನ ಕಡೆಯಿಂದಾಗಲಿ ಕೆಳಗಿನ ಕಡೆಯಿಂದಾಗಲಿ ಆ ವಸ್ತುವಿನೊಳಗೆ ವ್ಯಾಪಿಸಿದ್ದರಿಂದ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.</verse>
				<verse number="56">ಆದರೆ ತೊಳೆದ ಬಟ್ಟೆಯನ್ನು ಯಾಜಕನು ನೋಡುವಾಗ ಅದರಲ್ಲಿದ್ದ ಮಚ್ಚೆ ಮೊಬ್ಬಾಗಿ ಹೋಗಿದ್ದರೆ ಅವನು ಆ ಮಚ್ಚೆ ಇರುವ ಭಾಗವನ್ನು ಬಟ್ಟೆಯಿಂದಾಗಲಿ ತೊಗಲಿನಿಂದಾಗಲಿ ನೆಯಿಗೆಯಿಂದಾಗಲಿ ಹೆಣಿಗೆಯಿಂದಾಗಲಿ ಕತ್ತರಿಸಿಬಿಡಬೇಕು.</verse>
				<verse number="57">ಆಮೇಲೆಯೂ ಕುಷ್ಠದ ಮಚ್ಚೆ ಆ ಬಟ್ಟೆಯಲ್ಲಾಗಲಿ ನೆಯಿಗೆಯಲ್ಲಾಗಲಿ ಹೆಣಿಗೆಯಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಂಡು ಬಂದರೆ ಕುಷ್ಠರೋಗವು ಇನ್ನೂ ಅದರಲ್ಲಿ ಉಂಟೆಂದು ತಿಳಿದುಕೊಳ್ಳಬೇಕು. ಆ ಮಚ್ಚೆ ಇರುವ ವಸ್ತುವನ್ನೇ ಬೆಂಕಿಯಿಂದ ಸುಟ್ಟುಬಿಡಬೇಕು.</verse>
				<verse number="58">ಆ ಬಟ್ಟೆಯಲ್ಲಾಗಲಿ ನೆಯಿಗೆಯಲ್ಲಾಗಲಿ ಹೆಣಿಗೆಯಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ತೊಳೆದ ನಂತರ ಆ ಮಚ್ಚೆ ಕಾಣದೆ ಹೋದರೆ ಅದನ್ನು ಎರಡನೆಯ ಸಾರಿ ತೊಳೆಯಬೇಕು; ಆಗ ಅದು ಶುದ್ಧವಾಗುವುದು.</verse>
				<verse number="59">ಉಣ್ಣೇ ಬಟ್ಟೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ನೆಯಿಗೆಯಲ್ಲಾಗಲಿ ಹೆಣಿಗೆಯಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಾಣಬಂದ ಕುಷ್ಠರೋಗದ ಗುರುತಿನ ವಿಷಯವಾದ ವಿಧಿ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬುದು ಇದರಿಂದ ತಿಳಿಯುವುದು.</verse>
			</chapter>
			<chapter number="14">
				<verse number="1">ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದ್ದೇನೆಂದರೆ -</verse>
				<verse number="2">ಕುಷ್ಠರೋಗಿ ಶುದ್ಧನಾಗುವ ದಿನದಲ್ಲಿ ಅವನ ವಿಷಯದಲ್ಲಿ ಅನುಸರಿಸಬೇಕಾದ ಕ್ರಮ ಇದು: ಅವನನ್ನು ಯಾಜಕನಿಗೆ ತೋರಿಸಬೇಕು.</verse>
				<verse number="3">ಯಾಜಕನು ಪಾಳೆಯದ ಹೊರಕ್ಕೆ ಹೋಗಿ ಅವನನ್ನು ಪರೀಕ್ಷಿಸಬೇಕು. ಆಗ ಅವನಲ್ಲಿದ್ದ ಕುಷ್ಠವು ವಾಸಿಯಾಯಿತೆಂದು ಕಂಡರೆ</verse>
				<verse number="4">ಶುದ್ಧಮಾಡಿಸಿಕೊಳ್ಳುವವನ ಪರವಾಗಿ ಸಜೀವವಾದ ಎರಡು ಶುದ್ಧಪಕ್ಷಿಗಳನ್ನೂ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.</verse>
				<verse number="5">ಆ ಪಕ್ಷಿಗಳಲ್ಲಿ ಒಂದನ್ನು ಒರತೆ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಆಜ್ಞಾಪಿಸಿ, ಮತ್ತೊಂದು ಪಕ್ಷಿಯನ್ನೂ</verse>
				<verse number="6">ಆ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತೆಗೆದುಕೊಂಡು ಒರತೆ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಅವುಗಳನ್ನೆಲ್ಲಾ ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಿ</verse>
				<verse number="7">ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿಮುಕಿಸಿ ಅವನನ್ನು ಶುದ್ಧನೆಂದು ನಿರ್ಣಯಿಸಿ ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.</verse>
				<verse number="8">ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸರ್ವಾಂಗಕ್ಷೌರ ಮಾಡಿಸಿಕೊಂಡು ಸ್ನಾನಮಾಡಿದ ಮೇಲೆ ಶುದ್ಧನಾಗುವನು. ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೇ ಇರಬೇಕು.</verse>
				<verse number="9">ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರ ಮಾಡಿಸಿಕೊಂಡು ತನ್ನ ಬಟ್ಟೆಗಳನ್ನು ಒಗೆದುಕೊಂಡು ಜಲಸ್ನಾನ ಮಾಡಬೇಕು. ಆಗಿನಿಂದ ಶುದ್ಧನಾಗುವನು.</verse>
				<verse number="10">ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನೂ ಪೂರ್ಣಾಂಗವಾದ ಒಂದು ವರುಷದ ಕುರಿಯನ್ನೂ ನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಒಂಬತ್ತು ಸೇರು ಗೋಧಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.</verse>
				<verse number="11">ಶುದ್ಧಿಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನದ ಗುಡಾರದ ಬಾಗಿಲಲ್ಲಿ</verse>
				<verse number="12">ಸರ್ವೇಶ್ವರನ ಸನ್ನಿಧಿಯಲ್ಲಿ ನಿಲ್ಲಿಸಿ ಆ ಟಗರುಗಳಲ್ಲಿ ಒಂದನ್ನೂ ಆ ಒಂದು ಸೇರು ಎಣ್ಣೆಯನ್ನೂ ಪ್ರಾಯಶ್ಚಿತ್ತ ಬಲಿಯಾಗಿ ಸಮರ್ಪಿಸಬೇಕು: ಅವುಗಳನ್ನು ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿ ಎತ್ತಬೇಕು.</verse>
				<verse number="13">ದೋಷಪರಿಹಾರಕ ಬಲಿಪ್ರಾಣಿಯನ್ನೂ ದಹನ ಬಲಿಪ್ರಾಣಿಯನ್ನೂ ವಧಿಸುವ ಸ್ಥಳದಲ್ಲೇ, ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರನ್ನು ವಧಿಸಬೇಕು. ಏಕೆಂದರೆ ದೋಷಪರಿಹಾರಕ ಬಲಿದ್ರವ್ಯದಂತೆಯೇ ಪ್ರಾಯಶ್ಚಿತ್ತ ಬಲಿದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು; ಅದು ಮಹಾಪರಿಶುದ್ಧವಾದದ್ದು;</verse>
				<verse number="14">ಆಗ ಯಾಜಕನು ಆ ಪ್ರಾಯಶ್ಚಿತ್ತ ಬಲಿಪ್ರಾಣಿಯ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.</verse>
				<verse number="15">ಆಗ ಯಾಜಕನು ಆ ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದಕೊಂಡು</verse>
				<verse number="16">ತನ್ನ ಬಲಗೈಯ ಬೆರಳನ್ನು ಅದರಲ್ಲಿ ಅದ್ದಿ ಸರ್ವೇಶ್ವರನ ಸನ್ನಿಧಿಯಲ್ಲಿ ಏಳು ಸಾರಿ ಬೆರಳಿನಿಂದ ಚಿಮುಕಿಸಬೇಕು.</verse>
				<verse number="17">ಅವನು ತನ್ನ ಕೈಯಲ್ಲಿರುವ ಮಿಕ್ಕ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆರಳಿಗೂ ಪ್ರಾಯಶ್ಚಿತ್ತ ಬಲಿಪ್ರಾಣಿಯ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಿ</verse>
				<verse number="18">ಕೈಯಲ್ಲಿರುವ ಮಿಕ್ಕ ಎಣ್ಣೆಯನ್ನು ಶುದ್ಧ ಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.</verse>
				<verse number="19">ಅದಲ್ಲದೆ, ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವುದಕ್ಕೆ ಆ ಕುರಿಯನ್ನು ದೋಷಪರಿಹಾರಕ ಬಲಿಯಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆಮೇಲೆ ಯಾಜಕನು ಆ ಎರಡನೆಯ ಟಗರುಮರಿಯನ್ನು ದಹನಬಲಿಯಾಗಿ ವಧಿಸಬೇಕು.</verse>
				<verse number="20">ಅವನು ಆ ದಹನಬಲಿಯನ್ನೂ, ನೈವೇದ್ಯವನ್ನೂ ಬಲಿಪೀಠದ ಮೇಲೆ ಸಮರ್ಪಿಸಬೇಕು. ಯಾಜಕನು ಅವನ ಪರವಾಗಿ ಹೀಗೆ ದೋಷಪರಿಹಾರ ಮಾಡಿದಾಗ ಅವನು ಶುದ್ಧನಾಗುವನು.</verse>
				<verse number="21">ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಅಶಕ್ತನಾಗಿದ್ದರೆ ಪ್ರಾಯಶ್ಚಿತ್ತ ಬಲಿಗಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳಲು (ಯಾಜಕನ ಕೈಯಿಂದ) ನೈವೇದ್ಯವಾಗಿ ಆರತಿಯೆತ್ತಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಒಂದು ಕಿಲೋಗ್ರಾಂ ಗೋಧಿ ಹಿಟ್ಟನ್ನೂ ಸುಮಾರು ಕಾಲು ಲೀಟರ್ ಎಣ್ಣೆಯನ್ನೂ ತರಬೇಕು.</verse>
				<verse number="22">ಅದಲ್ಲದೆ ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಬಲಿಯಾಗಿ ಒಂದನ್ನೂ ದಹನಬಲಿಯಾಗಿ ಮತ್ತೊಂದನ್ನೂ ಸಮರ್ಪಿಸಬೇಕು.</verse>
				<verse number="23">ಅವನು ತನ್ನ ಶುದ್ಧೀಕರಣಕ್ಕಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಸರ್ವೇಶ್ವರನ ಸನ್ನಿಧಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.</verse>
				<verse number="24">ಯಾಜಕನು ಪ್ರಾಯಶ್ಚಿತ್ತ ಬಲಿಯ ಕುರಿಯನ್ನೂ ಆ ಸೇರು ಎಣ್ಣೆಯನ್ನೂ ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯವಾಗಿ ಆರತಿಯೆತ್ತಬೇಕು.</verse>
				<verse number="25">ಪ್ರಾಯಶ್ಚಿತ್ತ ಬಲಿಯ ಕುರಿಯನ್ನು ವಧಿಸಿದ ನಂತರ ಯಾಜಕನು ಅದರ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.</verse>
				<verse number="26">ಮತ್ತು ಯಾಜಕನು ಆ ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು</verse>
				<verse number="27">ಅದರಲ್ಲಿ ಸ್ವಲ್ಪವನ್ನು ಬಲಗೈಯ ಬೆರಳಿನಿಂದ ಏಳು ಸಾರಿ ಸರ್ವೇಶ್ವರನ ಸನ್ನಿಧಿಯಲ್ಲಿ ಚಿಮುಕಿಸಬೇಕು.</verse>
				<verse number="28">ಮತ್ತು ಯಾಜಕನು ತನ್ನ ಕೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧಿಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತ ಬಲಿಪ್ರಾಣಿಯ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.</verse>
				<verse number="29">ಶುದ್ಧಮಾಡಿಸಿಕೊಳ್ಳುವವನ ಪರವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವುದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ಮಿಕ್ಕ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ಯಬೇಕು.</verse>
				<verse number="30">ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳಲ್ಲಿಯಾಗಲಿ</verse>
				<verse number="31">ಪಾರಿವಾಳದ ಮರಿಗಳಲ್ಲಿಯಾಗಲಿ ದೋಷಪರಿಹಾರಕ ಬಲಿಯಾಗಿ ಒಂದನ್ನೂ ದಹನಬಲಿಯಾಗಿ ಒಂದನ್ನೂ ನೈವೇದ್ಯದ್ರವ್ಯವನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧಿಮಾಡಿಸಿಕೊಳ್ಳುವವನ ಪರವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು.</verse>
				<verse number="32">ಶುದ್ಧೀಕರಣ ಬಲಿಗಳನ್ನು ಅರ್ಪಿಸುವುದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ವಿಧಿಯನ್ನು ಅನುಸರಿಸಬೇಕು.</verse>
				<verse number="33">ಸರ್ವೇಶ್ವರಸ್ವಾಮಿ ಮೋಶೆ ಮತ್ತು ಆರೋನರಿಗೆ ಹೇಳಿದ್ದೇನೆಂದರೆ -</verse>
				<verse number="34">“ನಿಮಗೆ ಸ್ವದೇಶವಾಗಿ ನಾನು ಕೊಡುವ ಕಾನಾನ್ ನಾಡಿಗೆ ನೀವು ಬಂದ ನಂತರ ಆ ನಾಡಿನ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಸೂಚಿಸುತ್ತೇನೋ</verse>
				<verse number="35">ಆ ಮನೆಯ ಒಡೆಯನು ಯಾಜಕನ ಬಳಿಗೆ ಬಂದು - “ನನ್ನ ಮನೆಯಲ್ಲಿ ಕುಷ್ಠರೋಗದ ಗುರುತು ಇರುವಂತೆ ತೋರುತ್ತದೆ,” ಎಂದು ಅವನಿಗೆ ತಿಳಿಸಬೇಕು.</verse>
				<verse number="36">ಯಾಜಕನು ತಾನು ಆ ರೋಗದ ಗುರುತನ್ನು ನೋಡಲು ಬರುವುದಕ್ಕೆ ಮುಂಚೆ ಆ ಮನೆಯನ್ನು ಬರಿದು ಮಾಡಲು ಆಜ್ಞಾಪಿಸಬೇಕು. ಹಾಗೆ ಬರಿದು ಮಾಡದಿದ್ದರೆ ಆ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ಅಶುದ್ಧವಾಗುವುವು. ಬರಿದು ಮಾಡಿದ ಮೇಲೆ ಯಾಜಕನು ಆ ಮನೆಯನ್ನು ಪರೀಕ್ಷಿಸುವುದಕ್ಕೆ ಒಳಗೆ ಹೋಗಬೇಕು.</verse>
				<verse number="37">ಅವನು ಮನೆಯ ಗೋಡೆಗಳಲ್ಲಿರುವ ರೋಗದ ಗುರುತುಗಳನ್ನು ನೋಡುವಾಗ ಆ ಗುರುತುಗಳು ಹಸುರಾಗಿ ಅಥವಾ ಕೆಂಪಾಗಿ ಇದ್ದು ಗೋಡೆಯ ಮಟ್ಟಕ್ಕಿಂತ ತಗ್ಗಾಗಿ ತೋರಿದರೆ ಯಾಜಕನು ಹೊರಗೆ ಬಂದು</verse>
				<verse number="38">ಆ ಮನೆಯನ್ನು ಏಳು ದಿನಗಳವರೆಗೂ ಮುಚ್ಚಿಸಿಬಿಡಬೇಕು.</verse>
				<verse number="39">ಏಳನೆಯ ದಿನದಲ್ಲಿ ಯಾಜಕನು ಬಂದು ನೋಡುವಾಗ ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ</verse>
				<verse number="40">ಆ ಗುರುತುಗಳು ಇರುವ ಕಲ್ಲುಗಳನ್ನು ತೆಗಿಸಿಬಿಟ್ಟು ಊರಿನ ಹೊರಗೆ ಅಪವಿತ್ರವಾದ ಸ್ಥಳದಲ್ಲಿ ಹಾಕಿಸಬೇಕು.</verse>
				<verse number="41">ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗಡೆಯನ್ನೆಲ್ಲಾ ಗೀಚಿಸಿ, ಗೀಚಿದ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.</verse>
				<verse number="42">ಆಗ ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ ಹೊಸಮಣ್ಣನ್ನು ತರಿಸಿ ಆ ಗೋಡೆಗಳಿಗೆ ಮೆತ್ತಬೇಕು.</verse>
				<verse number="43">ಅವನು ಆ ಕಲ್ಲುಗಳನ್ನು ತೆಗೆಸಿ ಮನೆಯ ಗೋಡೆಗಳನ್ನು ಗೀಚಿಸಿ ಮಣ್ಣು ಮೆತ್ತಿದ ಮೇಲೆ ಆ ರೋಗದ ಗುರುತು ತಿರಿಗಿ ಕಾಣಬಂದರೆ ಯಾಜಕನು ಬಂದು ಪರೀಕ್ಷಿಸಬೇಕು.</verse>
				<verse number="44">ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವುದು.</verse>
				<verse number="45">ಅವನು ಆ ಮನೆಯನ್ನು ಕೆಡವಿ ಅದರ ಎಲ್ಲಾ ಕಲ್ಲುಗಳನ್ನೂ ತೊಲೆಗಳನ್ನೂ ಮಣ್ಣನ್ನೂ ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.</verse>
				<verse number="46">ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಂಜೆಯವರೆಗೆ ಅಶುದ್ಧನಾಗಿರುವನು.</verse>
				<verse number="47">ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು.</verse>
				<verse number="48">ಆದರೆ ತಾನು ಆ ಮನೆಗೆ ಹೊಸದಾಗಿ ಮಣ್ಣು ಮೆತ್ತಿಸಿದ ಮೇಲೆ ಯಾಜಕನು ಬಂದು ನೋಡುವಾಗ ಆ ರೋಗದ ಗುರುತು ಕಾಣಿಸದೆಹೋದರೆ ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.</verse>
				<verse number="49">ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನೂ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತೆಗೆದುಕೊಂಡು ಒಂದು ಪಕ್ಷಿಯನ್ನು</verse>
				<verse number="50">ಒರತೆ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಿ</verse>
				<verse number="51">ಆ ದೇವದಾರಿನ ಕಟ್ಟಿಗೆಯನ್ನೂ ಹಿಸ್ಸೋಪಿನ ಬರಲನ್ನೂ ರಕ್ತವರ್ಣವುಳ್ಳ ದಾರವನ್ನೂ ಸಜೀವವಾದ ಮತ್ತೊಂದು ಪಕ್ಷಿಯನ್ನೂ ತೆಗೆದುಕೊಂಡು ತಾನು ವಧಿಸಿದ ಪಕ್ಷಿಯ ರಕ್ತದಲ್ಲಿಯೂ ಒರತೆಯ ನೀರಿನಲ್ಲಿಯೂ ಅದ್ದಿ ಏಳು ಸಾರಿ ಆ ಮನೆಯ ಗೋಡೆಗಳಿಗೆ ಪ್ರೋಕ್ಷಿಸಬೇಕು.</verse>
				<verse number="52">ಹಾಗೆ ಆ ಪಕ್ಷಿಯ ರಕ್ತ, ಒರತೆ ನೀರು, ಸಜೀವಪಕ್ಷಿ, ದೇವದಾರಿನ ಆ ಕಟ್ಟಿಗೆ, ಹಿಸ್ಸೋಪು, ರಕ್ತವರ್ಣದ ದಾರ ಇವುಗಳಿಂದ ಆ ಮನೆಯನ್ನು ಶುದ್ಧಿ ಮಾಡುವನು.</verse>
				<verse number="53">ಅವನು ಆ ಜೀವವುಳ್ಳ ಪಕ್ಷಿಯನ್ನು ಊರ ಹೊರಕ್ಕೆ ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಹೀಗೆ ಅವನು ಆ ಮನೆಗಾಗಿ ದೋಷಪರಿಹಾರ ಮಾಡಿದಾಗ ಅದು ಶುದ್ಧವಾಗಿರುವುದು.</verse>
				<verse number="54">ನಾನಾ ವಿಧವಾದ ಕುಷ್ಠರೋಗದ ಗುರುತುಗಳು, ಅಂದರೆ ಕೂದಲು ಬೆಳೆಯದ ಇಸಬು,</verse>
				<verse number="55">ಬಟ್ಟೆಯಲ್ಲಿ ಅಥವಾ ಮನೆಯ ಗೋಡೆಯಲ್ಲಿ ಕಾಣಿಸುವ ಕುಷ್ಠರೋಗದ ಗುರುತು,</verse>
				<verse number="56">ಶರೀರದ ಚರ್ಮದ ಮೇಲೆ ಉಂಟಾಗುವ ಬಾವು, ಗುಳ್ಳೆ, ಹೊಳೆಯುವ ಕಲೆ</verse>
				<verse number="57">ಇವುಗಳಲ್ಲಿ ಶುದ್ಧಾಶುದ್ಧಬೇಧವನ್ನು ನಿರ್ಣಯಿಸುವ ನಿಯಮಗಳು ಇವು.</verse>
			</chapter>
			<chapter number="15">
				<verse number="1">ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನರಿಗೆ ಹೀಗೆಂದರು:</verse>
				<verse number="2">“ನೀವು ಇಸ್ರಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ - ಒಬ್ಬ ವ್ಯಕ್ತಿಯ ಜನನೇಂದ್ರಿಯದಿಂದ ಮೇಹಸ್ರಾವವಾದರೆ ಆ ಕಾರಣ ಆ ವ್ಯಕ್ತಿ ಅಶುದ್ಧನು.</verse>
				<verse number="3">ಆ ಸ್ರಾವವು ಹರಿಯುತ್ತಿದ್ದರೂ ನಿಂತುಹೋಗಿದ್ದರೂ ಆ ದೇಹಸ್ಥಿತಿಯಿಂದ ಅವನು ಅಶುದ್ಧನು.</verse>
				<verse number="4">ಅಂಥವನು ಮಲಗಿರುವ ಪ್ರತಿಯೊಂದು ಹಾಸಿಗೆಯೂ ಕೂತಿರುವ ಪ್ರತಿಯೊಂದು ಆಸನವೂ ಅಶುದ್ಧ.</verse>
				<verse number="5">ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಂಜೆಯವರೆಗೆ ಅಶುದ್ಧನು.</verse>
				<verse number="6">ಸ್ರಾವವುಳ್ಳವನು ಕುಳಿತಿದ್ದ ಆಸನದ ಮೇಲೆ ಕುಳಿತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.</verse>
				<verse number="7">ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.</verse>
				<verse number="8">ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.</verse>
				<verse number="9">ಸ್ರಾವವುಳ್ಳವನು ಕುಳಿತಿದ್ದ ತಡಿಯು ಅಶುದ್ಧ.</verse>
				<verse number="10">ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಆ ಸಂಜೆಯವರೆಗೆ ಅಶುದ್ಧನಾಗಿರುವನು. ಅಂಥ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.</verse>
				<verse number="11">ಸ್ರಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾರನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಂಜೆಯವರೆಗೆ ಅಶುದ್ಧನಾಗಿರುವನು.</verse>
				<verse number="12">ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ಅವನು ಮರದ ಪಾತ್ರೆಯನ್ನು ಮುಟ್ಟಿದರೆ ಅದನ್ನು ನೀರಿನಿಂದ ತೊಳೆಯಬೇಕು.</verse>
				<verse number="13">ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ ಅವನು ಶುದ್ಧ ಮಾಡಿಸಿಕೊಳ್ಳುವುದಕ್ಕೆ ಆಗಿನಿಂದ ಏಳು ದಿನಗಳನ್ನು ಎಣಿಸಿಕೊಂಡು ತನ್ನ ಬಟ್ಟೆಗಳನ್ನು ಒಗೆದುಕೊಂಡು ಒರತೆ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು.</verse>
				<verse number="14">ಎಂಟನೆಯ ದಿನ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಸರ್ವೇಶ್ವರನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.</verse>
				<verse number="15">ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಯಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವನ ಪರವಾಗಿ ದೋಷಪರಿಹಾರ ಮಾಡುವನು.</verse>
				<verse number="16">“ಒಬ್ಬನಿಗೆ ವೀರ್ಯಸ್ಖಲನವಾದರೆ ಅವನು ಸರ್ವಾಂಗಸ್ನಾನ ಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.</verse>
				<verse number="17">ಯಾವ ಬಟ್ಟೆಯ ಮೇಲಾಗಲಿ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು, ಅದು ಸಾಯಂಕಾಲದವರೆಗೆ ಅಶುದ್ಧವಾಗಿರುವುದು.</verse>
				<verse number="18">ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಂಜೆಯವರೆಗೆ ಅಶುದ್ಧರಾಗಿರುವರು.</verse>
				<verse number="19">“ಮಹಿಳೆಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಂಜೆಯವರೆಗೆ ಅಶುದ್ಧರಾಗುವರು.</verse>
				<verse number="20">ಅವಳು ಮುಟ್ಟಾಗಿರುವಾಗ ಯಾವುದರ ಮೇಲೆ ಮಲಗಿದರೂ ಕುಳಿತುಕೊಂಡರೂ ಅದು ಅಶುದ್ಧವಾಗಿರುವುದು.</verse>
				<verse number="21">ಅವಳ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಸಂಜೆಯವರೆಗೆ ಅಶುದ್ಧನಾಗಿರುವನು.</verse>
				<verse number="22">ಅವಳು ಯಾವುದರ ಮೇಲೆ ಕುಳಿತಿದ್ದಳೋ ಅದನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು. ಅವನು ಸಂಜೆಯವರೆಗೆ ಅಶುದ್ಧನಾಗಿರುವನು.</verse>
				<verse number="23">ಅವಳು ಮಲಗಿದ್ದ ಹಾಸಿಗೆಯ ಮೇಲಾಗಲಿ, ಕುಳಿತಿದ್ದ ಸ್ಥಳದ ಮೇಲಾಗಲಿ ಇದ್ದ ಯಾವುದನ್ನಾದರೂ ಮುಟ್ಟಿದವನು ಸಂಜೆಯವರೆಗೆ ಅಶುದ್ಧನಾಗಿರುವನು.</verse>
				<verse number="24">ಪುರುಷನು ಒಂದು ವೇಳೆ ಅಂಥವಳೊಡನೆ ಸಂಗಮಿಸಿ ಅವಳ ರಜಸ್ಸು ಅವನಿಗೆ ತಗಲಿದರೆ ಅವನು ಏಳು ದಿನಗಳ ತನಕ ಅಶುದ್ಧನಾಗಿರುವನು. ಅಷ್ಟರಲ್ಲಿ ಅವನು ಯಾವ ಹಾಸಿಗೆಯ ಮೇಲೆ ಮಲಗಿಕೊಂಡರೂ ಅದು ಅಶುದ್ಧವಾಗಿರುವುದು.</verse>
				<verse number="25">“ಮಹಿಳೆಗೆ ಮುಟ್ಟಿನ ಕಾಲದಲ್ಲಿ ಮಾತ್ರವಲ್ಲದೆ ಬೇರೆ ದಿನಗಳಲ್ಲೂ ರಕ್ತಸ್ರಾವವಾದರೆ, ಇಲ್ಲವೆ ಮುಟ್ಟಿನ ಕಾಲದಲ್ಲಿ ತಕ್ಕದ್ದಕ್ಕಿಂತ ಹೆಚ್ಚು ದಿನಗಳು ರಕ್ತಸ್ರಾವವಾದರೆ, ಅವಳು ತಿಂಗಳಿನ ಮುಟ್ಟಿನಿಂದ ಹೇಗೆ ಅಶುದ್ದಳೋ ಹಾಗೆಯೇ ಆ ಸ್ರಾವವಾಗುವ ದಿನಗಳೆಲ್ಲಾ ಅಶುದ್ಧಳಾಗಿರುವಳು.</verse>
				<verse number="26">ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ, ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ, ಅಶುದ್ಧವಾಗುವುದು. ಅವಳು ಯಾವುದರ ಮೇಲೆ ಕುಳಿತುಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕುಳಿತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವುದು.</verse>
				<verse number="27">ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದುದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಂಜೆಯವರೆಗೆ ಅಶುದ್ಧನಾಗಿರುವನು.</verse>
				<verse number="28">ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕಿಸಿಕೊಂಡು ತರುವಾಯ ಶುದ್ಧಳಾಗುವಳು.</verse>
				<verse number="29">ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.</verse>
				<verse number="30">ಯಾಜಕನು ದೋಷಪರಿಹಾರಕ ಬಲಿಗಾಗಿ ಒಂದನ್ನೂ ದಹನಬಲಿಗಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಪರಿಶುದ್ಧತೆಯ ವಿಷಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಅವಳ ಪರವಾಗಿ ದೋಷಪರಿಹಾರ ಮಾಡುವನು.</verse>
				<verse number="31">“ಇಸ್ರಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾದಾರು.</verse>
				<verse number="32">ಮೇಹಸ್ರಾವವುಳ್ಳವನು, ವೀರ್ಯಸ್ಖಲನದಿಂದ ಅಶುದ್ಧನಾದವನು,</verse>
				<verse number="33">ಮುಟ್ಟಾದ ಮಹಿಳೆ ಸ್ರಾವವುಂಟಾಗುವ ಸ್ತ್ರೀ ಪುರುಷರು ಹಾಗು ಅಶುದ್ಧಳಾದ ಮಹಿಳೆಯನ್ನು ಸಂಗಮಿಸಿದವನು ಇವರ ವಿಷಯವಾದ ನಿಯಮಗಳು ಇವು.</verse>
			</chapter>
			<chapter number="16">
				<verse number="1">ಆರೋನನ ಇಬ್ಬರು ಮಕ್ಕಳು ಸರ್ವೇಶ್ವರ ಸ್ವಾಮಿಯ ಸನ್ನಿಧಿಗೆ ಬಂದು ನಾಶವಾದ ಮೇಲೆ</verse>
				<verse number="2">ಮೋಶೆಯ ಸಂಗಡ ಸರ್ವೇಶ್ವರ ಮಾತಾಡಿ ಹೇಳಿದ್ದೇನೆಂದರೆ - “ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ, ಮಹಾಪವಿತ್ರ ಸ್ಥಾನದೊಳಕ್ಕೆ ಮಂಜೂಷದ ಮೇಲಿನ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ಬಂದರೆ ನಾಶವಾಗುವನು. ಏಕೆಂದರೆ ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವೆನು.</verse>
				<verse number="3">ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಈ ರೀತಿಯಾಗಿ ಬರಬೇಕು. ದೋಷಪರಿಹಾರಕ ಬಲಿಗಾಗಿ ಹೋರಿಯನ್ನೂ ದಹನಬಲಿಗಾಗಿ ಟಗರನ್ನೂ ತರಬೇಕು.</verse>
				<verse number="4">ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು ನಾರಿನ ಚಡ್ಡಿಯನ್ನು ಹಾಕಿಕೊಂಡು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ತಲೆಗೆ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು.</verse>
				<verse number="5">ಇಸ್ರಯೇಲರ ಸಮಾಜದಿಂದ ದೋಷಪರಿಹಾರಕ ಬಲಿಗಾಗಿ ಎರಡು ಹೋತಗಳನ್ನೂ ದಹನಬಲಿಗಾಗಿ ಒಂದು ಟಗರನ್ನೂ ತೆಗೆದುಕೊಂಡು ಬರಬೇಕು.</verse>
				<verse number="6">ಆರೋನನು ತನಗಾಗಿ ತಂದ ಹೋರಿಯನ್ನು ಸಮರ್ಪಿಸಿ ತನ್ನ ಹಾಗು ತನ್ನ ಮನೆತನದವರ ಪರವಾಗಿ ಪಶ್ಚಾತ್ತಾಪ ವಿಧಿಯನ್ನು ನೆರವೇರಿಸಬೇಕು.</verse>
				<verse number="7">ಆ ಎರಡು ಹೋತಗಳನ್ನು ಅವನು ದೇವದರ್ಶನದ ಗುಡಾರದ ಬಾಗಿಲಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ನಿಲ್ಲಿಸಬೇಕು.</verse>
				<verse number="8">ಆಗ ಅವನು ಆ ಹೋತಗಳಲ್ಲಿ ಯಾವುದು ಸರ್ವೇಶ್ವರನಿಗೆ, ಯಾವುದು ಅಜಾಜೇಲನಿಗೆ ಎಂದು ತಿಳಿದುಕೊಳ್ಳಲು ದಾಳಹಾಕಬೇಕು.</verse>
				<verse number="9">ಯಾವ ಹೋತ ಸರ್ವೇಶ್ವರನದೆಂದು ಗೊತ್ತಾಗುವುದೋ ಅದನ್ನು ಆರೋನನು ದೋಷಪರಿಹಾರಕ ಬಲಿಗಾಗಿ ಸಮರ್ಪಿಸಬೇಕು.</verse>
				<verse number="10">ಯಾವ ಹೋತ ಅಜಾಜೇಲನದೆಂದು ಗೊತ್ತಾಗುವುದೋ ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ, ಅದರ ಮೇಲೆ ದೋಷ ಹೊರಿಸಿ, ಮರುಭೂಮಿಗೆ ಅಜಾಜೇಲನಿಗಾಗಿ ಬಿಡಿಸಿಬಿಡಬೇಕು.</verse>
				<verse number="11">ಆರೋನನು ತನಗಾಗಿ ದೋಷಪರಿಹಾರಕ ಬಲಿಯ ಹೋರಿಯನ್ನು ಸಮರ್ಪಿಸಿ ತನ್ನ ಹಾಗು ತನ್ನ ಮನೆತನದವರ ಪರವಾಗಿ ಪ್ರಾಯಶ್ಚಿತ್ತ ವಿಧಿಯನ್ನು ನೆರವೇರಿಸಬೇಕು.</verse>
				<verse number="12">ಅವನು ತನಗೋಸ್ಕರವಾದ ಆ ಹೋರಿಯನ್ನು ವಧಿಸಿದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ವೇದಿಕೆಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ ಪರಿಮಳ ಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ತೆರೆಯನ್ನು ದಾಟಿ,</verse>
				<verse number="13">ಆ ಧೂಪವನ್ನು ಸರ್ವೇಶ್ವರನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಧೂಪದ ಹೊಗೆ ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಮುಚ್ಚುವುದು.</verse>
				<verse number="14">ಆಗ ಆ ಹೋರಿಯ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಕೃಪಾಸನದ ಪೂರ್ವಭಾಗದ ಮೇಲೆ ಬೆರಳಿನಿಂದ ಚಿಮುಕಿಸಿ ಕೃಪಾಸನದ ಎದುರಾಗಿಯೂ ಏಳು ಸಾರಿ ಚಿಮುಕಿಸಬೇಕು.</verse>
				<verse number="15">ತರುವಾಯ ಅವನು ಜನರ ಪರವಾಗಿ ದೋಷಪರಿಹಾರಕ ಬಲಿಯ ಹೋತವನ್ನು ವಧಿಸಿ ಅದರ ರಕ್ತವನ್ನು ತೆರೆಯೊಳಗೆ ತಂದು ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ ಕೃಪಾಸನದ ಮೇಲೆಯೂ ಎದುರಾಗಿಯೂ ಚಿಮುಕಿಸಬೇಕು.</verse>
				<verse number="16">ಹೀಗೆ ಇಸ್ರಯೇಲರು ನಾನಾ ವಿಧವಾದ ಅಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೂ ಹಾಗೆಯೇ ದೋಷಪರಿಹಾರ ಮಾಡುವನು.</verse>
				<verse number="17">ಅವನು ದೋಷಪರಿಹಾರ ಮಾಡುವುದಕ್ಕಾಗಿ ಮಹಾಪವಿತ್ರಸ್ಥಾನದೊಳಗೆ ಹೋಗಿ ಹೊರಗೆ ಬರುವ ತನಕ ಯಾರೂ ದೇವದರ್ಶನದ ಗುಡಾರದೊಳಗೆ ಹೋಗಕೂಡದು. ಹಾಗೆ ತನ್ನ ಹಾಗು ಮನೆತನದವರ ಪರವಾಗಿ ಮತ್ತು ಇಸ್ರಯೇಲರ ಇಡೀ ಸಮಾಜದ ಪರವಾಗಿ ಪ್ರಾಯಶ್ಚಿತ್ತ ಮಾಡುವನು.</verse>
				<verse number="18">ತರುವಾಯ ಅವನು ಹೊರಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿರುವ ಬಲಿಪೀಠದ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲೂ ಆ ಹೋತದ ರಕ್ತದಲ್ಲೂ ಸ್ವಲ್ಪ ಸ್ವಲ್ಪತೆಗೆದುಕೊಂಡು ಪೀಠದ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.</verse>
				<verse number="19">ಅವನು ಆ ರಕ್ತದಲ್ಲಿ ಸ್ವಲ್ಪವನ್ನು ಅದರ ಮೇಲೆ ಏಳು ಸಾರಿ ಬೆರಳಿನಿಂದ ಚಿಮುಕಿಸಿ ಇಸ್ರಯೇಲರಿಂದ ಅದಕ್ಕುಂಟಾದ ಅಶುದ್ಧತ್ವವನ್ನು ಹೋಗಲಾಡಿಸಿ ಅದನ್ನು ಪರಿಶುದ್ಧಪಡಿಸಬೇಕು.</verse>
				<verse number="20">ಮಹಾಪವಿತ್ರಸ್ಥಾನ, ದೇವದರ್ಶನದ ಗುಡಾರ, ಪೀಠ, ಇವುಗಳಿಗೋಸ್ಕರ ಆರೋನನು ದೋಷಪರಿಹಾರ ಮಾಡಿ ಮುಗಿಸಿದ ಮೇಲೆ, ಆ ಸಜೀವವಾದ ಹೋತವನ್ನು ತರಿಸಿ,</verse>
				<verse number="21">ಅದರ ತಲೆಯ ಮೇಲೆ ಎರಡು ಕೈಗಳನ್ನೂ ಇಟ್ಟು ಇಸ್ರಯೇಲರ ಎಲ್ಲಾ ಪಾಪಗಳನ್ನೂ ದ್ರೋಹಗಳನ್ನೂ, ಅಪರಾಧಗಳನ್ನೂ, ಸರ್ವೇಶ್ವರನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಮರುಭೂಮಿಗೆ ಕಳಿಸಿಬಿಡಬೇಕು.</verse>
				<verse number="22">ಆ ಹೋತ ಅವರ ಎಲ್ಲಾ ಪಾಪಗಳನ್ನೂ ತನ್ನ ಮೇಲೆ ಹೊತ್ತುಕೊಂಡು ದುರ್ಗಮವಾದ ಪ್ರದೇಶಕ್ಕೆ ಒಯ್ಯುವಂತೆ ಆ ಮನುಷ್ಯನು ಅದನ್ನು ಮರುಭೂಮಿಗೆ ತೆಗೆದುಕೊಂಡುಹೋಗಿ ಅಲ್ಲೇ ಬಿಟ್ಟುಬಿಡಬೇಕು.</verse>
				<verse number="23">ತರುವಾಯ ಆರೋನನು ದೇವದರ್ಶನದ ಗುಡಾರದೊಳಗೆ ಬಂದು, ತಾನು ಮಹಾಪವಿತ್ರಸ್ಥಾನದೊಳಗೆ ಹೋಗುವುದಕ್ಕಾಗಿ ಧರಿಸಿಕೊಂಡಿದ್ದ ನಾರುಮಡಿಗಳನ್ನು ತೆಗೆದು ಅಲ್ಲೇ ಇಟ್ಟು,</verse>
				<verse number="24">ಪ್ರಾಕಾರದಲ್ಲಿ ಸ್ನಾನಮಾಡಿ ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು. ಆಗ ಅವನು ಹೊರಗೆ ಬಂದು ತನ್ನ ಹಾಗು ಜನಸಮೂಹದ ಪರವಾಗಿ ದಹನಬಲಿಗಳನ್ನು ಸಮರ್ಪಿಸಿ ತನ್ನ ಮತ್ತು ಜನರ ಪರವಾಗಿ ಪ್ರಾಯಶ್ಚಿತ್ತ ವಿಧಿಯನ್ನು ನೆರವೇರಿಸಬೇಕು.</verse>
				<verse number="25">ಅವನು ದೋಷಪರಿಹಾರಕ ಬಲಿಪ್ರಾಣಿಗಳ ಕೊಬ್ಬನ್ನು ಬಲಿಪೀಠದ ಮೇಲೆ ಹೋಮಮಾಡಬೇಕು.</verse>
				<verse number="26">ಅಜಾಜೇಲನಿಗೆ ಹೋತವನ್ನು ಬಿಟ್ಟುಬಂದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯಕ್ಕೆ ಬರಬೇಕು.</verse>
				<verse number="27">ದೋಷಪರಿಹಾರಕ ಬಲಿಪ್ರಾಣಿಗಳಾದ ಹೋರಿಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವುದಕ್ಕಾಗಿ ತಂದ ಮೇಲೆ ಅವುಗಳ ದೇಹಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಚರ್ಮಮಾಂಸ ಕಲ್ಮಷಗಳೆಲ್ಲವನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು.</verse>
				<verse number="28">ಅವುಗಳನ್ನು ಸುಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಿಯೇ ಪಾಳೆಯದೊಳಗೆ ಬರಬೇಕು.</verse>
				<verse number="29">ಇದು ನಿಮಗೆ ಶಾಶ್ವತವಾದ ನಿಯಮ: ಸ್ವದೇಶೀಯರಾದ ನೀವೂ ನಿಮ್ಮಲ್ಲಿ ವಾಸಮಾಡುವ ಅನ್ಯದೇಶದವರೆಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನ ಸಕಲ ವಿಧವಾದ ದುಡಿಮೆಗಳನ್ನೂ ಬಿಟ್ಟು ತಮ್ಮನ್ನೇ ಪರಿತ್ಯಜಿಸಿಕೊಳ್ಳಬೇಕು.</verse>
				<verse number="30">ಏಕೆಂದರೆ ನೀವು ಪರಿಶುದ್ಧರಾಗುವಂತೆ ಈ ದಿನ ನಿಮ್ಮ ಪರವಾಗಿ ಪ್ರಾಯಶ್ಚಿತ್ತ ಮಾಡಲಾಗುವುದು. ಸರ್ವೇಶ್ವರನ ದೃಷ್ಟಿಯಲ್ಲಿ ನಿಮ್ಮ ಎಲ್ಲಾ ದೋಷಗಳು ನಿವಾರಣೆಯಾಗುವುವು.</verse>
				<verse number="31">ಇದು ನಿಮಗೆ ಪೂರ್ತಿ ದುಡಿಮೆ ನಿಲ್ಲಿಸಬೇಕಾದ ಸಬ್ಬತ್ ದಿನವಾಗಿರಬೇಕು; ಇದರಲ್ಲಿ ನೀವು ಉಪವಾಸವಿರಬೇಕು; ನಿಮಗಿದು ಶಾಶ್ವತನಿಯಮ.</verse>
				<verse number="32">ಆರೋನನ ವಂಶದವರಲ್ಲಿ ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಸೇವಾವೃತ್ತಿಯನ್ನು ನಡೆಸುವುದಕ್ಕೆ ಪಟ್ಟಾಭಿಷೇಕವಾಗುವುದೋ ಅವನೇ ಈ ದೋಷಪರಿಹಾರ ಕಾರ್ಯವನ್ನು ನೆರವೇರಿಸಬೇಕು.</verse>
				<verse number="33">ಅವನೇ ಆ ನಾರುಮಡಿಗಳನ್ನು ಧರಿಸಿಕೊಂಡು ಪರಿಶುದ್ಧವಾದ ದೇವಸ್ಥಾನ, ದೇವದರ್ಶನದ ಗುಡಾರ, ಬಲಿಪೀಠ, ಯಾಜಕರು, ಜನಸಮೂಹದವರು ಈ ಎಲ್ಲರ ಪರವಾಗಿ ಪ್ರಾಯಶ್ಚಿತ್ತ ವಿಧಿಯನ್ನು ನೆರವೇರಿಸಬೇಕು.</verse>
				<verse number="34">ಇಸ್ರಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ಪ್ರಾಯಶ್ಚಿತ್ತ ಮಾಡಬೇಕಾದುದು ನಿಮಗೆ ಶಾಶ್ವತ ನಿಯಮವಾಗಿರಬೇಕು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.</verse>
			</chapter>
			<chapter number="17">
				<verse number="1">ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದರು:</verse>
				<verse number="2">“ನೀನು ಆರೋನನಿಗೂ ಅವನ ಮಕ್ಕಳಿಗೂ ಹಾಗು ಇಸ್ರಯೇಲರಿಗೂ ಹೇಳಬೇಕಾದುದು ಇದು:</verse>
				<verse number="3">ಇಸ್ರಯೇಲರಲ್ಲಿ ಯಾರಾದರು ಹೋರಿಯನ್ನಾಗಲಿ, ಕುರಿಯನ್ನಾಗಲಿ, ಆಡನ್ನಾಗಲಿ ಬಲಿಕೊಡುವಾಗ ಅದನ್ನು ಸರ್ವೇಶ್ವರನಿಗೆ ಸಮರ್ಪಿಸಲು ದೇವಗುಡಾರದ ಬಾಗಿಲಿಗೆ ತರದೆ</verse>
				<verse number="4">ಪಾಳೆಯದ ಒಳಗಾಗಲಿ, ಹೊರಗಾಗಲಿ ಕೊಯ್ದರೆ ಅಂಥವನನ್ನು ಕೊಲೆಪಾತಕ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದ್ದರಿಂದ ಕುಲದಿಂದ ಬಹಿಷ್ಕೃತನಾಗಬೇಕು</verse>
				<verse number="5">ಏಕೆಂದರೆ ಬಲಿಪ್ರಾಣಿಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು ಸರ್ವೇಶ್ವರನ ಮುಂದೆ ಶಾಂತಿಸಮಾಧಾನದ ಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.</verse>
				<verse number="6">ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಿಲಿನ ಮುಂದಿರುವ ಬಲಿಪೀಠಕ್ಕೆ ಚಿಮುಕಿಸಿ, ಅವುಗಳ ಕೊಬ್ಬನ್ನು ಹೋಮಮಾಡಿ, ಸರ್ವೇಶ್ವರನಿಗೆ ಸುವಾಸನೆಯನ್ನುಂಟುಮಾಡಬೇಕು.</verse>
				<verse number="7">ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.</verse>
				<verse number="8">“ಇದಲ್ಲದೆ ನೀನು ಅವರಿಗೆ ಹೀಗೆಂದು ಆಜ್ಞಾಪಿಸು: ಇಸ್ರಯೇಲರಲ್ಲಿ ಆಗಲಿ, ಅವರ ನಡುವೆ ವಾಸಿಸುವ ಅನ್ಯದೇಶದವರಲ್ಲಿ ಆಗಲಿ ಯಾವನಾದರು ದಹನಬಲಿಯನ್ನು ಆಥವಾ ಬೇರೆ ವಿಧವಾದ ಬಲಿದಾನ ಮಾಡುವಾಗ</verse>
				<verse number="9">ಆ ಪ್ರಾಣಿಯನ್ನು ಸರ್ವೇಶ್ವರನಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲಿಗೆ ತರದಿದ್ದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.</verse>
				<verse number="10">“ಅಷ್ಟುಮಾತ್ರವಲ್ಲ, ಇಸ್ರಯೇಲರಲ್ಲಾಗಲಿ, ಅವರ ನಡುವೆ ವಾಸಿಸುವ ಅನ್ಯದೇಶದವರಲ್ಲಾಗಲಿ ಯಾರಾದರು ರಕ್ತಭೋಜನ ಮಾಡಿದರೆ ಸರ್ವೇಶ್ವರ ಅಂಥ ವ್ಯಕ್ತಿಯ ವಿರುದ್ಧ ಉಗ್ರಕೋಪಗೊಳ್ಳುವರು; ಅವನನ್ನು ತನ್ನ ಪ್ರಜೆಯಿಂದ ತೆಗೆದುಹಾಕುವರು.</verse>
				<verse number="11">ಏಕೆಂದರೆ ದೇಹಕ್ಕೆ ರಕ್ತವೇ ಪ್ರಾಣಾಧಾರ. ಆ ರಕ್ತವನ್ನು ನೀವು ಬಲಿಪೀಠಕ್ಕೆ ಪ್ರೋಕ್ಷಿಸಿ ನಿಮ್ಮ ನಿಮ್ಮ ದೋಷ ಪರಿಹಾರ ಮಾಡಿಕೊಳ್ಳಬೇಕೆಂದು ಸರ್ವೇಶ್ವರ ಅನುಗ್ರಹಿಸಿದ್ದಾರೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರವಾಗುತ್ತದೆ.</verse>
				<verse number="12">ಎಂದೇ ನಿಮ್ಮಲ್ಲಿಯಾಗಲಿ, ನಿಮ್ಮ ನಡುವೆ ವಾಸಮಾಡುವ ಅನ್ಯದೇಶೀಯವರಲ್ಲಾಗಲಿ ಯಾರೂ ರಕ್ತಭೋಜನ ಮಾಡಬಾರದೆಂದು ಸರ್ವೇಶ್ವರ ಇಸ್ರಯೇಲರಿಗೆ ಆಜ್ಞಾಪಿಸಿದ್ದಾರೆ.</verse>
				<verse number="13">“ಇಸ್ರಯೇಲರಲ್ಲಾಗಲಿ ಅವರ ನಡುವೆ ವಾಸಮಾಡುವ ಅನ್ಯದೇಶೀಯರಲ್ಲಾಗಲಿ ಯಾರಾದರು ಬೇಟೆಮಾಡಿ ತಿನ್ನಬಹುದಾದ ಪ್ರಾಣಿಯನ್ನು ಅಥವಾ ಪಕ್ಷಿಯನ್ನು ಹಿಡಿದರೆ ಅವನು ಅದರ ರಕ್ತವನ್ನು ಸುರಿದು ಮಣ್ಣಿನಿಂದ ಮುಚ್ಚಿಡಬೇಕು.</verse>
				<verse number="14">ಏಕೆಂದರೆ ಪ್ರತಿ ದೇಹಕ್ಕೂ ರಕ್ತವೇ ಪ್ರಾಣಾಧಾರ. ಆದಕಾರಣ ಸರ್ವೇಶ್ವರ ಇಸ್ರಯೇಲರಿಗೆ, ಪ್ರತಿ ಪ್ರಾಣಿಗೂ ರಕ್ತವೇ ಪ್ರಾಣಾಧಾರವಾದ್ದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನೂ ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರ ಹಾಕಬೇಕು,’ ಎಂದು ಆಜ್ಞಾಪಿಸಿದ್ದಾರೆ.</verse>
				<verse number="15">“ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗ ಕೊಂದದ್ದನ್ನಾಗಲಿ ತಿಂದವನು ಸ್ವದೇಶದವನಾಗಿರಲಿ, ಅಥವಾ ಅನ್ಯದೇಶೀಯನಾಗಿರಲಿ ಅಂಥವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಆ ದಿನದ ಸಂಜೆಯವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು.</verse>
				<verse number="16">ಅವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳದೆ ಹಾಗು ಸ್ನಾನಮಾಡಿಕೊಳ್ಳದೆ ಹೋದರೆ ತನ್ನ ಪಾಪದ ಫಲವನ್ನು ಅನುಭವಿಸಬೇಕು.</verse>
			</chapter>
			<chapter number="18">
				<verse number="1">ಇಸ್ರಯೇಲರಿಗೆ ಈ ಆಜ್ಞೆಗಳನ್ನು ಕೊಡಬೇಕೆಂದು ಸರ್ವೇಶ್ವರ ಸ್ವಾಮಿ ಮೋಶೆಗೆ ತಿಳಿಸಿದರು:</verse>
				<verse number="2">“ನಾನು ನಿಮ್ಮ ದೇವರಾಗಿರುವ ಸರ್ವೇಶ್ವರ.</verse>
				<verse number="3">ನೀವು ವಾಸವಾಗಿದ್ದ ಈಜಿಪ್ಟಿನ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಕರೆದೊಯ್ಯುತ್ತಿರುವ ಕಾನಾನ್ ನಾಡಿನ ಆಚರಣೆಗಳನ್ನು ಕೂಡ ನೀವು ಅನುಸರಿಸಬಾರದು. ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಕೂಡದು.</verse>
				<verse number="4">ಸರ್ವೇಶ್ವರನೆಂಬ ನಾನೇ ನಿಮ್ಮ ದೇವರಾಗಿರುವುದರಿಂದ ನನ್ನ ನಿರ್ಣಯಗಳ ಪ್ರಕಾರವೇ ನೀವು ನಡೆಯಬೇಕು; ನನ್ನ ವಿಧಿಗಳನ್ನೇ ಅನುಸರಿಸಬೇಕು.</verse>
				<verse number="5">ನನ್ನ ಆಜ್ಞಾವಿಧಿಗಳ ಪ್ರಕಾರ ನಡೆದುಕೊಳ್ಳುವವರು ಆ ಆಜ್ಞಾವಿಧಿಗಳಿಂದ ಜೀವಿಸುವರು. ಆದುದರಿಂದ ನೀವು ಅವುಗಳನ್ನೇ ಅನುಸರಿಸಬೇಕು. ನಾನೇ ಸರ್ವೇಶ್ವರ.</verse>
				<verse number="6">ನಿಮ್ಮಲ್ಲಿ ಯಾರೂ ರಕ್ತಸಂಬಂಧವುಳ್ಳವರೊಡನೆ ಮೈಗೂಡಿಸಕೂಡದು; ನಾನೇ ಸರ್ವೇಶ್ವರ.</verse>
				<verse number="7">“ನಿನ್ನ ತಂದೆಯೊಡನೇ ಆಗಲಿ, ತಾಯಿಯೊಡನೆ ಆಗಲಿ ಸಂಭೋಗಿಸಕೂಡದು, ತಾಯಿಯೊಡನೆ ಎಷ್ಟು ಮಾತ್ರವೂ ಸಂಗಮಿಸಬಾರದು. ಆಕೆ ನಿನ್ನ ಹೆತ್ತ ತಾಯಿ.</verse>
				<verse number="8">“ಮಲತಾಯಿಯನ್ನು ಸಂಭೋಗಿಸಬಾರದು; ಹಾಗೆ ಮಾಡಿದರೆ ತಂದೆಗೆ ಮಾನಭಂಗವಾಗುವುದು. ಆಕೆ ನಿನ್ನ ತಂದೆಯ ಅರ್ಧಾಂಗಿ.</verse>
				<verse number="9">“ತಂದೆಯ ಮಗಳನ್ನಾಗಲಿ, ತಾಯಿಯ ಮಗಳನ್ನಾಗಲಿ ಸಂಭೋಗಿಸಬಾರದು; ಅವರು ಒಡಹುಟ್ಟಿದವರು; ಪರಸ್ತ್ರೀಯರಲ್ಲಿ ಹುಟ್ಟಿದವರಾದರೂ ಅವರು ನಿಮಗೆ ಅಕ್ಕತಂಗಿಯರು.</verse>
				<verse number="10">“ಮಗನ ಮಗಳನ್ನಾಗಲಿ ಮಗಳ ಮಗಳನ್ನಾಗಲಿ ಸಂಭೋಗಿಸಬಾರದು; ಅವರು ನಿಮಗೆ ಮಕ್ಕಳಂಥವರು.</verse>
				<verse number="11">“ತಂದೆಯ ಮತ್ತೊಬ್ಬ ಹೆಂಡತಿಯಲ್ಲಿ ಹುಟ್ಟಿದವಳನ್ನು ಸಂಭೋಗಿಸಬಾರದು; ಆಕೆ ಸಹೋದರಿ.</verse>
				<verse number="12">“ತಂದೆಯ ಒಡಹುಟ್ಟಿದವಳೊಡನೆ ಸಂಭೋಗ ಮಾಡಬಾರದು; ಆಕೆ ತಂದೆಯ ರಕ್ತ ಸಂಬಂಧಿ.</verse>
				<verse number="13">“ತಾಯಿಯ ಒಡಹುಟ್ಟಿದವಳೊಡನೆ ಸಂಭೋಗ ಮಾಡಬಾರದು; ಆಕೆ ತಾಯಿಯ ರಕ್ತಸಂಬಂದಿ.</verse>
				<verse number="14">“ತಂದೆಯ ಅಣ್ಣತಮ್ಮಂದಿರ ಹೆಂಡತಿಯನ್ನು ಸಂಭೋಗಿಸಬಾರದು; ಅವರು ದೊಡ್ಡಮ್ಮ, ಚಿಕ್ಕಮ್ಮ ನಿಮಗೆ.</verse>
				<verse number="15">“ಸೊಸೆಯನ್ನು ಸಂಗಮಿಸಬಾರದು; ಆಕೆ ಮಗನ ಹೆಂಡತಿ.</verse>
				<verse number="16">“ಅತ್ತಿಗೆ ನಾದಿನಿಯರನ್ನು ಸಂಭೋಗಿಸಬಾರದು; ಅವರು ಅಣ್ಣತಮ್ಮಂದಿರ ಹೆಂಡತಿಯರು.</verse>
				<verse number="17">“ಮದುವೆ ಮಾಡಿಕೊಂಡವಳ ಮಗಳನ್ನಾಗಲಿ ಮೊಮ್ಮಗಳನ್ನಾಗಲಿ ಸಂಗಮಿಸಬಾರದು. ಅವರು ರಕ್ತಸಂಬಂಧಿಗಳು, ಅದು ಅಧರ್ಮ.</verse>
				<verse number="18">“ಹೆಂಡತಿ ಜೀವದಿಂದಿರುವಾಗಲೆ ಆಕೆಯ ಒಡಹುಟ್ಟಿದವಳನ್ನು ಮದುವೆಮಾಡಿಕೊಂಡು ಹೆಂಡತಿಗೆ ಮನಸ್ತಾಪವನ್ನುಂಟು ಮಾಡಬಾರದು.</verse>
				<verse number="19">“ಮುಟ್ಟಿನಿಂದ ಅಶುದ್ಧಳಾದ ಮಹಿಳೆಯನ್ನು ಸಂಗಮಿಸಬಾರದು.</verse>
				<verse number="20">ಪರಸ್ತ್ರೀ ಸಂಭೋಗದಿಂದ ಅಶುದ್ಧರಾಗಬಾರದು.</verse>
				<verse number="21">ನಿಮ್ಮ ಮಕ್ಕಳಲ್ಲಿ ಯಾರನ್ನೂ ಮೋಲೆಕ ದೇವತೆಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ಸರ್ವೇಶ್ವರ ನಾನೇ.</verse>
				<verse number="22">ಸ್ತ್ರೀಯನ್ನು ಸಂಗಮಿಸುವಂತೆ ಪುರುಷನನ್ನು ಸಂಗಮಿಸಬಾರದು; ಅದು ಹೇಸಿಗೆಯಾದುದು.</verse>
				<verse number="23">ಪ್ರಾಣಿ ಸಂಗಮವನ್ನು ಮಾಡಿ ಅಶುದ್ಧರಾಗಬಾರದು; ಯಾವ ಸ್ತ್ರೀಯೂ ಸಂಗಮಕ್ಕಾಗಿ ಪ್ರಾಣಿಯನ್ನು ಸಂಪರ್ಕಿಸಬಾರದು; ಅದು ವ್ಯತಿರಿಕ್ತವಾದುದು.</verse>
				<verse number="24">“ಇಂಥ ದುರಾಚಾರಗಳಾವುದರಿಂದಲೂ ನೀವು ಅಶುದ್ಧರಾಗಬಾರದು. ಏಕೆಂದರೆ ನಾನು ನಿಮಗೆ ಮುಂಚಿತವಾಗಿ ಹೊರಡಿಸುವ ಜನಾಂಗಗಳವರು ಇಂಥ ಅನಾಚಾರಗಳಿಂದಲೇ ಅಶುದ್ಧರಾದರು.</verse>
				<verse number="25">ಹೀಗೆ ಅವರ ನಾಡು ಅಶುದ್ಧವಾಗಿ ಹೋದುದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ. ಆ ನಾಡು ತನ್ನಲ್ಲಿ ವಾಸಿಸಿದವರನ್ನು ಕಕ್ಕಿಬಿಟ್ಟಿತು.</verse>
				<verse number="26">ಆದುದರಿಂದ ಸ್ವದೇಶದವರಾದ ನಿಮ್ಮಲ್ಲಿಯಾಗಲಿ, ನಿಮ್ಮ ನಡುವೆ ವಾಸಿಸುವ ಅನ್ಯದೇಶೀಯರಲ್ಲಾಗಲಿ ಯಾರೂ ಇಂಥ ಹೇಸಿಗೆಯಾದ ಕಾರ್ಯಗಳಲ್ಲಿ ಒಂದನ್ನೂ ಮಾಡದೆ ಎಲ್ಲರೂ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು.</verse>
				<verse number="27">ನಿಮಗಿಂತ ಮುಂಚೆ ನಾಡಿನಲ್ಲಿ ಇದ್ದವರು ಇಂಥ ಅಸಹ್ಯವಾದ ಕೆಲಸಗಳನ್ನು ಮಾಡಿದ್ದರಿಂದ ಆ ನಾಡು ಕೆಟ್ಟುಹೋಯಿತು.</verse>
				<verse number="28">ನಿಮಗಿಂತ ಮುಂಚೆಯಿದ್ದ ಜನಾಂಗಗಳನ್ನು ಆ ನಾಡು ಕಕ್ಕಿಬಿಟ್ಟ ಪ್ರಕಾರವೇ ಅದು ನಿಮ್ಮಿಂದ ಅದು ಮಲಿನವಾದರೆ ನಿಮ್ಮನ್ನೂ ಅಂತೆಯೇ ಕಕ್ಕಿಬಿಡುವುದು.</verse>
				<verse number="29">ಯಾರಾದರೂ ಈ ಅಸಹ್ಯವಾದ ಕಾರ್ಯಗಳಲ್ಲಿ ಒಂದನ್ನು ಮಾಡಿದ್ದೇ ಆದರೆ ಅವನನ್ನು ಕುಲದಿಂದ ತೆಗೆದುಬಿಡಬೇಕು.</verse>
				<verse number="30">ಆದುದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡೆಸಿ ನಿಮ್ಮನ್ನೇ ಅಶುದ್ಧಮಾಡಿಕೊಳ್ಳದೆ ನನ್ನ ವಿಧಿಗಳನ್ನು ಅನುಸರಿಸಿ ನಡೆಯಬೇಕು. ನಾನೇ ನಿಮ್ಮ ದೇವರಾದ ಸರ್ವೇಶ್ವರ.</verse>
			</chapter>
			<chapter number="19">
				<verse number="1">ಇಸ್ರಯೇಲ್ ಸಮಾಜದವರಿಗೆ ಹೀಗೆ ಆಜ್ಞಾಪಿಸುವಂತೆ ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದರು:</verse>
				<verse number="2">“ನಿಮ್ಮ ದೇವರಾದ ಸರ್ವೇಶ್ವರನೆಂಬ ನಾನು ಪರಿಶುದ್ಧ ನಾಗಿರುವಂತೆ ನೀವು ಕೂಡ ಪರಿಶುದ್ಧ ರಾಗಿರಬೇಕು.</verse>
				<verse number="3">ಪ್ರತಿಯೊಬ್ಬ ವ್ಯಕ್ತಿಯು ತನ್ನ ತಂದೆತಾಯಿಗಳ ವಿಷಯ಼ದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನೇ ನಿಮ್ಮ ದೇವರಾದ ಸರ್ವೇಶ್ವರ.</verse>
				<verse number="4">“ಶೂನ್ಯ ದೇವರುಗಳ ಕಡೆ ತಿರುಗಿಕೊಳ್ಳಬೇಡಿ; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬೇಡಿ. ನಾನೇ ನಿಮ್ಮ ದೇವರಾದ ಸರ್ವೇಶ್ವರನು.</verse>
				<verse number="5">“ಶಾಂತಿಸಮಾಧಾನದ ಬಲಿಗಳನ್ನು ಸರ್ವೇಶ್ವರನಿಗೆ ಸಮರ್ಪಿಸುವಾಗ ಅವರಿಗೆ ಮೆಚ್ಚುಗೆಯಾಗುವ ರೀತಿಯಲ್ಲಿ ಸಮರ್ಪಿಸಬೇಕು.</verse>
				<verse number="6">ನೀವು ಮಾಡುವ ಬಲಿದಾನದ ಮಾಂಸವನ್ನು ಅದೇ ದಿನದಲ್ಲಿ ಅಥವಾ ಮರುದಿನದಲ್ಲಿ ಊಟಮಾಡಿಬಿಡಬೇಕು. ಮೂರನೆಯ ದಿನದವರೆಗೆ ಏನಾದರೂ ಮಿಕ್ಕಿದ್ದರೆ ಅದನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು.</verse>
				<verse number="7">ಮೂರನೆಯ ದಿನದ ತನಕ ಉಳಿದದ್ದು ಅಳಿಸಿಹೋದದ್ದು. ಆದುದರಿಂದ ಅದರಲ್ಲಿ ಏನನ್ನಾದರೂ ತಿಂದರೆ ಆ ಬಲಿದಾನ ಸರ್ವೇಶ್ವರನಿಗೆ ಸ್ವೀಕೃತವಾಗುವುದಿಲ್ಲ.</verse>
				<verse number="8">ಅದರಲ್ಲಿ ಏನನ್ನಾದರೂ ತಿಂದವನು ಸರ್ವೇಶ್ವರನ ದ್ರವ್ಯವಾದ ಪರಿಶುದ್ಧತೆಯನ್ನು ಹೊಲೆಮಾಡುತ್ತಾನೆ. ಆದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಲೇಬೇಕು. ಅವನು ಕುಲದಿಂದ ಬಹಿಷ್ಕೃತನಾಗಬೇಕು.</verse>
				<verse number="9">“ನೀವು ಹೊಲಕೊಯ್ಯುವಾಗ ಮೂಲೆಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು; ಕೊಯ್ದಾದ ಮೇಲೆ ಹಕ್ಕಲಾಯಬಾರದು.</verse>
				<verse number="10">ದ್ರಾಕ್ಷಿತೋಟಗಳಲ್ಲೂ ಹಕ್ಕಲಾಯಕೂಡದು. ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡಬಗ್ಗರಿಗೂ ಪರದೇಶಿಗಳಿಗೂ ಅವುಗಳನ್ನು ಬಿಟ್ಟುಬಿಡಬೇಕು. ನಿಮ್ಮ ದೇವರಾದ ಸರ್ವೇಶ್ವರ ನಾನೇ.</verse>
				<verse number="11">“ಕಳಬೇಡ; ಹುಸಿಯನ್ನು ನುಡಿಯಲು ಬೇಡ; ಒಬ್ಬರನ್ನೊಬ್ಬರು ಮೋಸಗೊಳಿಸುವುದು ಬೇಡ.</verse>
				<verse number="12">ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿನ್ನ ದೇವರ ನಾಮಕ್ಕೆ ಅಪಕೀರ್ತಿ ತರಬೇಡ. ನಾನೇ ಸರ್ವೇಶ್ವರ.</verse>
				<verse number="13">ಮತ್ತೊಬ್ಬನನ್ನು ಬಲಾತ್ಕರಿಸಬೇಡ; ಅವನ ಸೊತ್ತನ್ನು ಅಪಹರಿಸಬೇಡ. ಕೂಲಿಯವನ ಕೂಲಿಯನ್ನು ಮರುದಿನದವರೆಗೆ ನಿನ್ನ ಬಳಿಯಲ್ಲೇ ಇಟ್ಟುಕೊಳ್ಳಬೇಡ.</verse>
				<verse number="14">ಕಿವುಡರನ್ನು ದೂಷಿಸಬೇಡ; ಕುರುಡರು ನಡೆಯುವ ದಾರಿಯಲ್ಲಿ ಎರಡು ಕಲ್ಲನ್ನು ಇಡಬೇಡ, ನಿನ್ನ ದೇವರಲ್ಲಿ ಭಯಭಕ್ತಿಯಿರಲಿ, ನಾನೇ ಸರ್ವೇಶ್ವರ.</verse>
				<verse number="15">“ವ್ಯಾಜ್ಯತೀರಿಸುವಾಗ ಅನ್ಯಾಯವಾದ ತೀರ್ಪನ್ನು ಕೊಡಬೇಡ. ಬಡವನ ಬಡತನವನ್ನಾಗಲಿ, ದೊಡ್ಡವನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದ ತೀರ್ಪನ್ನು ಕೊಡು.</verse>
				<verse number="16">“ನಿನ್ನ ಜನರ ನಡುವೆ ಚಾಡಿಕೋರನಾಗಿ ತಿರುಗಾಡಬೇಡ; ಮತ್ತೊಬ್ಬನಿಗೆ ಮರಣಶಿಕ್ಷೆ ಆಗಲೇಬೇಕೆಂದು ಛಲಹಿಡಿಯಬೇಡ. ನಾನೇ ಸರ್ವೇಶ್ವರ.</verse>
				<verse number="17">“ಸಹೋದರನ ಬಗ್ಗೆ ಒಳಗೊಳಗೇ ಹಗೆ ಇಟ್ಟುಕೊಳ್ಳಬೇಡ. ನೆರೆಯವನ ದೋಷಕ್ಕೆ ನೀನು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ಎತ್ತಿ ತೋರಿಸಲೇಬೇಕು.</verse>
				<verse number="18">ನಿನ್ನ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡು ಮಾಡಬೇಡ, ಅವರಿಗೆ ವಿರುದ್ಧ ಮತ್ಸರ ಇಟ್ಟುಕೊಳ್ಳಬೇಡ; ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು. ನಾನು ಸರ್ವೇಶ್ವರ.</verse>
				<verse number="19">“ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. ನಿಮ್ಮ ಜಾನುವಾರಗಳಿಂದ ಬೆರಕೆ ತಳಿಯನ್ನು ಪಡೆಯಲು ಅವಕಾಶವೀಯಬಾರದು; ನಿಮ್ಮ ಹೊಲದಲ್ಲಿ ಇಬ್ಬಗೆಯ ಬೀಜವನ್ನು ಬಿತ್ತಬಾರದು; ನಾರು ಮತ್ತು ಉಣ್ಣೆಯಿಂದ ನೇಯ್ದ ಬಟ್ಟೆಯನ್ನು ಹಾಕಿಕೊಳ್ಳಬಾರದು.</verse>
				<verse number="20">“ಒಬ್ಬನ ಅಧೀನದಲ್ಲಿರುವ ದಾಸಿ ಹಣ ಕೊಡುವುದರಿಂದಾಗಲಿ, ಉಚಿತವಾಗಿಯಾಗಲಿ ಬಿಡುಗಡೆ ಹೊಂದದೆ ಇರುವಾಗ ಇನ್ನೊಬ್ಬ ವ್ಯಕ್ತಿ ಅವಳನ್ನು ಕೂಡಿದರೆ ಅವರಿಗೆ ವಿಧಿಸಬೇಕಾದ ಶಿಕ್ಷೆಯ ಬಗ್ಗೆ ನ್ಯಾಯವಿಚಾರಣೆ ಆಗಬೇಕು. ಆದರೆ ಮರಣಶಿಕ್ಷೆ ವಿಧಿಸಬಾರದು. ಏಕೆಂದರೆ ಅವಳು ಇನ್ನೂ ದಾಸಿ.</verse>
				<verse number="21">ಆ ವ್ಯಕ್ತಿ ಪ್ರಾಯಶ್ಚಿತ್ತ ಬಲಿಗಾಗಿ ಸರ್ವೇಶ್ವರನ ಸನ್ನಿಧಿಗೆ, ದೇವದರ್ಶನದ ಗುಡಾರದ ಬಾಗಿಲಿಗೆ ಒಂದು ಟಗರನ್ನು ತರಬೇಕು.</verse>
				<verse number="22">ಅವನ ದೋಷಪರಿಹಾರಕ್ಕಾಗಿ ಯಾಜಕನು ಆ ಟಗರನ್ನು ಪ್ರಾಯಶ್ಚಿತ್ತ ಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಿ ಅವನ ಪರವಾಗಿ ದೋಷಪರಿಹಾರ ಮಾಡಿದಾಗ ಅವನಿಗೆ ಕ್ಷಮೆ ದೊರಕುವುದು.</verse>
				<verse number="23">“ನೀವು ಆ ಕಾನಾನ್ ನಾಡನ್ನು ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ ಅದರ ಫಲವನ್ನು ಮೂರು ವರ್ಷದ ತನಕ ಅಶುದ್ಧವೆಂದೆಣಿಸಿ ಅದನ್ನು ತಿನ್ನದಿರಬೇಕು.</verse>
				<verse number="24">ನಾಲ್ಕನೆಯ ವರ್ಷ ಅದರ ಎಲ್ಲಾ ಹಣ್ಣುಗಳೂ ದೇವರವಾಗಿರಬೇಕು; ಅವುಗಳನ್ನು ಸರ್ವೇಶ್ವರನಿಗೆ ಕೃತಜ್ಞತೆಯ ಕಾಣಿಕೆಯನ್ನಾಗಿ ಸಮರ್ಪಿಸಬೇಕು.</verse>
				<verse number="25">ಐದನೆಯ ವರ್ಷದಲ್ಲಿ ಅಂದು ಮೊದಲ್ಗೊಂಡು ಅದರ ಫಲಗಳನ್ನು ನೀವು ತಿನ್ನಬಹುದು. ನಿಮಗೆ ಹೆಚ್ಚು ಫಲ ದೊರಕುವುದು. ನಿಮ್ಮ ದೇವರಾದ ಸರ್ವೇಶ್ವರ ನಾನೇ.</verse>
				<verse number="26">“ರಕ್ತ ಸಹಿತವಾದ ಯಾವ ಮಾಂಸವನ್ನೂ ತಿನ್ನಬೇಡ. ತಂತ್ರಮಂತ್ರಗಳನ್ನು ಮಾಡಬೇಡ; ಶಕುನಗಳನ್ನು ನೋಡಬೇಡ.</verse>
				<verse number="27">ಚಂಡಿಕೆ ಬಿಡಬೇಡ, ಗಡ್ಡವನ್ನು ವಿಕಾರಗೊಳಿಸಬೇಡ.</verse>
				<verse number="28">ಸತ್ತವರಿಗಾಗಿ ಸಂತಾಪ ಸೂಚಿಸಲು ದೇಹವನ್ನು ಗಾಯಗೊಳಿಸಿಕೊಳ್ಳಬೇಡ. ಶರೀರದ ಮೇಲೆ ಹಚ್ಚೇಚುಚ್ಚಿಸಿಕೊಳ್ಳಬೇಡ. ನಾನು ಸರ್ವೇಶ್ವರ.</verse>
				<verse number="29">“ಮಗಳನ್ನು ಬಸವಿಬಿಟ್ಟು ವೇಶ್ಯೆಯನ್ನಾಗಿ ಮಾಡಬೇಡ. ಹಾಗೆ ಮಾಡಿದರೆ ಸೂಳೆಗಾರಿಕೆ ಪ್ರಬಲವಾಗಿ ನಾಡಿನಲ್ಲೆಲ್ಲಾ ತುಂಬಿಹೋಗುವುದು.</verse>
				<verse number="30">ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನನ್ನ ಆಲಯದ ಬಗ್ಗೆ ಭಯಭಕ್ತಿಯುಳ್ಳವರಾಗಿರಬೇಕು. ನಾನು ಸರ್ವೇಶ್ವರ.</verse>
				<verse number="31">“ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಬೇಡ; ಅವರ ಆಲೋಚನೆಯನ್ನು ಕೇಳಿ ಅಶುದ್ಧನಾಗಬೇಡ. ನಾನು ಸರ್ವೇಶ್ವರ.</verse>
				<verse number="32">“ತಲೆನರೆತ ವೃದ್ಧರ ಮುಂದೆ ಎದ್ದುನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಸರ್ವೇಶ್ವರ.</verse>
				<verse number="33">“ನಿಮ್ಮ ನಾಡಿನಲ್ಲಿ ತಂಗಿರುವ ಹೊರನಾಡಿಗರಿಗೆ ಅನ್ಯಾಯವೇನೂ ಮಾಡಬಾರದು.</verse>
				<verse number="34">ಅವರು ನಿಮಗೆ ಸ್ವಂತನಾಡಿನವರಂತೆಯೇ ಇರಬೇಕು. ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಈಜಿಪ್ಟಿನಲ್ಲಿದ್ದಾಗ ನೀವು ಕೂಡ ಅನ್ಯರಾಗಿದ್ದಿರಲ್ಲವೆ? ನಾನು ನಿಮ್ಮ ದೇವರಾದ ಸರ್ವೇಶ್ವರ.</verse>
				<verse number="35">“ನ್ಯಾಯ ವಿಚಾರಣೆ, ತೂಕ ಅಳತೆ, ಪರಿಮಾಣ ಇವುಗಳಲ್ಲಿ ನೀವು ನ್ಯಾಯವಿರುದ್ಧವಾಗಿ ನಡೆಯಬಾರದು.</verse>
				<verse number="36">ತಕ್ಕಡಿ, ತೂಕದಕಲ್ಲು, ಕೊಳಗ, ಸೇರು ಇವುಗಳೆಲ್ಲವು ನ್ಯಾಯಬದ್ಧವಾಗಿಯೇ ಇರಬೇಕು. ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರಾದ ಸರ್ವೇಶ್ವರ ನಾನೇ.</verse>
				<verse number="37">ಆದುದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಸರ್ವೇಶ್ವರ.</verse>
			</chapter>
			<chapter number="20">
				<verse number="1">ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದರು.</verse>
				<verse number="2">ಇಸ್ರಯೇಲರಲ್ಲೇ ಆಗಲಿ, ಅವರ ಮಧ್ಯೆ ವಾಸಿಸುವ ಅನ್ಯದೇಶೀಯರಲ್ಲೇ ಆಗಲಿ ಯಾವನಾದರು ತನ್ನ ಮಕ್ಕಳಲ್ಲಿ ಒಂದನ್ನು ಮೋಲೆಕ ದೇವತೆಗೆ ಅರ್ಪಿಸಿದರೆ ಅವನಿಗೆ ಮರಣ ಶಿಕ್ಷೆಯಾಗಬೇಕು; ನಾಡಿನ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.</verse>
				<verse number="3">ಅವನು ತನ್ನ ಮಕ್ಕಳಲ್ಲಿ ಒಂದನ್ನು ಮೋಲೆಕ ದೇವತೆಗೆ ಅರ್ಪಿಸಿ ನನ್ನ ದೇವಸ್ಥಾನವನ್ನು ಅಶುದ್ಧಮಾಡಿ ನನ್ನ ಪವಿತ್ರ ನಾಮಕ್ಕೆ ಅಪಕೀರ್ತಿ ತಂದಿದ್ದಾನೆ. ಆದ್ದರಿಂದ ನಾನು ಅವನಿಗೆ ವಿಮುಖನಾಗಿ ಅವನನ್ನು ನನ್ನ ಜನತೆಯಿಂದ ತೆಗೆದುಹಾಕುವೆನು.</verse>
				<verse number="4">ಆ ವ್ಯಕ್ತಿ ತನ್ನ ಮಕ್ಕಳಲ್ಲಿ ಒಂದನ್ನು ಮೋಲೆಕ ದೇವತೆಗೆ ಅರ್ಪಿಸಿದ್ದರೂ ನಾಡಿನವರು ಅವನನ್ನು ಕೊಲ್ಲದೆ ಅವನು ಮಾಡಿದ ಕೃತ್ಯವನ್ನು ನೋಡಿಯೂ ನೋಡದವರಂತೆ ವರ್ತಿಸಿದರೆ</verse>
				<verse number="5">ನಾನು ಆ ವ್ಯಕ್ತಿಗೂ ಅವನ ಕುಟುಂಬದವರಿಗೂ ವಿಮುಖನಾಗುವೆನು; ಅವನನ್ನು ಮಾತ್ರವಲ್ಲ, ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕ ದೇವತೆಗೆ ಶರಣಾದವರೆಲ್ಲರನ್ನು ತಮ್ಮ ಜನದಿಂದ ತೆಗೆದುಹಾಕುವೆನು.</verse>
				<verse number="6">“ಯಾರಾದರು ಭೂತ-ಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಿ, ಅವರ ಆಲೋಚನೆಯನ್ನು ಕೇಳಿ, ದೇವದ್ರೋಹಿಯಾದರೆ ನಾನು ಅಂಥ ವ್ಯಕ್ತಿಗೆ ವಿಮುಖನಾಗಿ ಅವನನ್ನು ತನ್ನ ಜನತೆಯಿಂದ ತೆಗೆದುಹಾಕುವೆನು.</verse>
				<verse number="7">ನಾನು ನಿಮ್ಮ ದೇವರಾದ ಸರ್ವೇಶ್ವರನಾಗಿರುವ ಕಾರಣ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.</verse>
				<verse number="8">ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ನಾನು ನಿಮ್ಮನ್ನು ಪವಿತ್ರಜನರಾಗುವಂತೆ ಮಾಡುವ ಸರ್ವೇಶ್ವರ.</verse>
				<verse number="9">“ತಂದೆಗಾಗಲಿ ತಾಯಿಗಾಗಲಿ ಶಾಪಹಾಕುವವರಿಗೆ ಮರಣಶಿಕ್ಷೆಯಾಗಬೇಕು. ತಂದೆತಾಯಿಗಳಿಗೆ ಶಾಪ ಹಾಕುವುದರಿಂದ ಅವರಿಗೆ ಸಂಭವಿಸುವ ಮರಣಶಿಕ್ಷೆಗೆ ಅವರೇ ಕಾರಣ.</verse>
				<verse number="10">“ಯಾವನಾದರು ಪರಪತ್ನಿಯೊಡನೆ ವ್ಯಭಿಚಾರ ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.</verse>
				<verse number="11">ಯಾವನಾದರು ಮಲತಾಯಿಯನ್ನು ಕೂಡಿದರೆ ಅವನು ತಂದೆಗೆ ಮಾನಭಂಗ ಮಾಡಿದಂತಾಯಿತು. ಅವರಿಬ್ಬರಿಗೂ ಮರಣ ಶಿಕ್ಷೆಯಾಗಬೇಕು. ಆ ಶಿಕ್ಷೆಗೆ ಅವರೇ ಕಾರಣರು.</verse>
				<verse number="12">ಯಾವನಾದರು ಸೊಸೆಯನ್ನು ಸಂಭೋಗಿಸಿದರೆ ಅವರಿಬ್ಬರಿಗೂ ಮರಣ ಶಿಕ್ಷೆಯಾಗಬೇಕು. ಅವರು ಅಧರ್ಮ ಕಾರ್ಯವನ್ನು ಮಾಡಿದ್ದರಿಂದ ಆ ಶಿಕ್ಷೆಗೆ ಅವರೇ ಕಾರಣರು.</verse>
				<verse number="13">ಯಾವನಾದರು ಸ್ತ್ರೀಯನ್ನು ಸಂಭೋಗಿಸುವಂತೆ ಪುರುಷನನ್ನು ಸಂಭೋಗಿಸಿದರೆ ಅವರಿಬ್ಬರೂ ಹೇಸಿಗೆಯ ಕೃತ್ಯ ಮಾಡಿದ್ದರಿಂದ ಅವರಿಗೆ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.</verse>
				<verse number="14">ಯಾವನಾದರೂ ಒಬ್ಬ ಸ್ತ್ರೀಯನ್ನೂ ಅವಳ ತಾಯಿಯನ್ನೂ ಇಟ್ಟುಕೊಂಡರೆ ಅದು ಅತಿದುಷ್ಟಕಾರ್ಯವಾದುದರಿಂದ ಆ ಮೂರು ಮಂದಿಯನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು; ಅಂಥ ದುರಾಚಾರವು ನಿಮ್ಮಲ್ಲಿ ಎಷ್ಟುಮಾತ್ರವೂ ನಡೆಯಬಾರದು.</verse>
				<verse number="15">ಯಾವನಾದರೂ ಪ್ರಾಣಿಸಂಗ ಮಾಡಿದರೆ ಅವನಿಗೆ ಮರಣಶಿಕ್ಷೆಯಾಗಬೇಕು. ಆ ಪ್ರಾಣಿಯನ್ನು ಕೊಲ್ಲಿಸಬೇಕು.</verse>
				<verse number="16">ಯಾವ ಸ್ತ್ರೀಯಾದರೂ ಪ್ರಾಣಿಯಿಂದ ಸಂಗಮಮಾಡಿಸಿಕೊಂಡರೆ ಆ ಸ್ತ್ರೀಯನ್ನೂ ಪ್ರಾಣಿಯನ್ನು ಕೊಲ್ಲಿಸಬೇಕು; ಅವಳಿಗೂ ಅದಕ್ಕೂ ಮರಣವೇ ವಿಧಿ. ಆ ಮರಣ ಶಿಕ್ಷೆಗೆ ತಾವೇ ಕಾರಣರು.</verse>
				<verse number="17">ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವುದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗಮಿಸಿದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು.</verse>
				<verse number="18">ಯಾವನಾದರೂ ಮುಟ್ಟಾದ ಸ್ತ್ರೀಯನ್ನು ಸಂಗಮಿಸಿದರೆ ಅವನು ಅವಳ ಶೋಣಿತಸ್ಥಾನವನ್ನು ಬಯಲುಪಡಿಸಿದವನು, ಅವಳು ಬಯಲುಪಡಿಸಿಕೊಂಡವಳು; ಆದ್ದರಿಂದ ಅವರಿಬ್ಬರೂ ಕುಲದಿಂದ ತೆಗೆದುಹಾಕಲ್ಪಡಬೇಕು.</verse>
				<verse number="19">ತಂದೆಯ ಅಥವಾ ತಾಯಿಯ ಒಡಹುಟ್ಟಿದವಳ ಸಂಗಮಾಡಬಾರದು; ಹಾಗೆ ಮಾಡಿದವನು ರಕ್ತಸಂಬಂಧಿಯನ್ನು ಸಂಗಮಿಸಿದವನಾದುದರಿಂದ ಅವರಿಬ್ಬರೂ ತಮ್ಮ ಪಾಪದ ಫಲವನ್ನು ಅನುಭವಿಸಬೇಕು.</verse>
				<verse number="20">ಯಾವನಾದರೂ ದೊಡ್ಡಮ್ಮನನ್ನಾಗಲಿ ಚಿಕ್ಕಮ್ಮನನ್ನಾಗಲಿ ಸಂಗಮಿಸಿದರೆ ಅವನು ದೊಡ್ಡಪ್ಪ ಚಿಕ್ಕಪ್ಪನವರ ಮಾನವನ್ನು ಭಂಗಪಡಿಸಿದವನಾದುದರಿಂದ ಆ ಸ್ತ್ರೀಪುರುಷರು ಆ ಪಾಪದ ಫಲವನ್ನು ಅನುಭವಿಸಬೇಕು; ಅವರು ಸಂತಾನವಿಲ್ಲದೆ ಸಾಯುವರು.</verse>
				<verse number="21">ಯಾವನಾದರೂ ಅತ್ತಿಗೆ ನಾದಿನಿಯವರನ್ನು ಇಟ್ಟುಕೊಂಡರೆ ಅದು ಅಶುದ್ಧವಾದ ಕೆಲಸ; ಅವನು ಅಣ್ಣತಮ್ಮಂದಿರ ಮಾನವನ್ನೇ ಭಂಗಪಡಿಸಿದವನು. ಅವರಿಗೆ ಸಂತಾನವಿರುವುದಿಲ್ಲ.</verse>
				<verse number="22">ಈ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು; ಹಾಗೆ ನಡೆದರೆ ನಾನು ನಿಮ್ಮನ್ನು ಯಾವ ದೇಶಕ್ಕೆ ಬರಮಾಡಿ ಅದನ್ನು ನಿವಾಸಕ್ಕಾಗಿ ಕೊಡುತ್ತೇನೋ ಆ ದೇಶವು ನಿಮ್ಮನ್ನು ಕಾರಿಬಿಡುವುದಿಲ್ಲ.</verse>
				<verse number="23">ನಾನು ನಿಮ್ಮ ಎದುರಿನಿಂದ ಹೊರಡಿಸುವ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡಿಸಿದುದರಿಂದ ನನಗೆ ಹೇಸಿಗೆಯಾದರು.</verse>
				<verse number="24">ನಿಮಗಾದರೋ - ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ; ಹಾಲೂ ಜೇನೂ ಹರಿಯುವಂಥ ಆ ದೇಶವನ್ನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವೆನು ಎಂದು ನಾನು ಮಾತುಕೊಟ್ಟೆನಲ್ಲವೇ? ನಾನು ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ ನಿಮ್ಮ ದೇವರಾದ ಸರ್ವೇಶ್ವರ.</verse>
				<verse number="25">ನೀವು ಶುದ್ಧಾಶುದ್ಧ ಜಂತುಗಳನ್ನು ಪಕ್ಷಿಗಳನ್ನು ವಿವೇಚನೆಮಾಡಿ ನಾನು ಅಶುದ್ಧವೆಂದು ನಿರ್ಣಯಿಸಿರುವ ಯಾವ ಪ್ರಾಣಿಪಕ್ಷಿ ಕ್ರಿಮಿಕೀಟಗಳಿಂದಲೂ ನಿಮ್ಮನ್ನು ಹೇಯಮಾಡಿಕೊಳ್ಳಬಾರದು.</verse>
				<verse number="26">ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿದ್ದೇನೆ, ಮತ್ತು ನೀವು ನನ್ನ ಜನರಾಗುವಂತೆ ನಿಮ್ಮನ್ನು ಇತರ ಜನಾಂಗಗಳಿಂದ ಪ್ರತ್ಯೇಕಿಸಿದ್ದೇನೆ; ಆದ್ದರಿಂದ ನೀವು ನನಗೆ ಮೀಸಲಾಗಿರಬೇಕು.</verse>
				<verse number="27">ಭೂತಪ್ರೇತಗಳನ್ನು ವಿಚಾರಿಸುವವರು ಸ್ತ್ರೀಯರಾಗಲಿ ಪುರುಷರಾಗಲಿ ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು; ಆ ಶಿಕ್ಷೆಗೆ ಅವರೇ ಕಾರಣರು.</verse>
			</chapter>
			<chapter number="21">
				<verse number="1">ಆರೋನನ ಮಕ್ಕಳಾದ ಯಾಜಕರಿಗೆ ಈ ಕೆಳಕಂಡಂತೆ ಆಜ್ಞಾಪಿಸಬೇಕೆಂದು ಸರ್ವೇಶ್ವರ ಸ್ವಾಮಿ ಮೋಶೆಗೆ ತಿಳಿಸಿದರು.</verse>
				<verse number="2">“ಯಾಜಕರಲ್ಲಿ ಯಾವನೂ ತನ್ನ ಕುಲದಲ್ಲಿ ಸತ್ತವರ ನಿಮಿತ್ತ ತನ್ನನ್ನೇ ಅಪವಿತ್ರಮಾಡಿಕೊಳ್ಳಬಾರದು. ಆದರೂ ಸಮೀಪ ರಕ್ತಸಂಬಂಧಿಗಳಾದ ತಾಯಿ, ತಂದೆ, ಮಕ್ಕಳು ಹಾಗು ಅಣ್ಣತಮ್ಮಂದಿರು ಇವರ ವಿಷಯದಲ್ಲಿ ಈ ವಿಧಿ ಅನ್ವಯಿಸುವುದಿಲ್ಲ;</verse>
				<verse number="3">ಇದಲ್ಲದೆ ಮದುವೆಯಾಗದೆ ತನ್ನ ಆಶ್ರಯದಲ್ಲಿರುವ ತಂಗಿಯ ವಿಷಯದಲ್ಲೂ ಈ ವಿಧಿ ಅನ್ವಯಿಸುವುದಿಲ್ಲ.</verse>
				<verse number="4">ಅವನು ಕುಲನಾಯಕನಾಗಿರುವುದರಿಂದ ತನ್ನನ್ನೇ ಅಪವಿತ್ರ ಮಾಡಿಕೊಳ್ಳಕೂಡದು. ಮಾಡಿಕೊಂಡರೆ ಯಾಜಕ ಸೇವಾವೃತ್ತಿಗೆ ಅಯೋಗ್ಯನಾಗುವನು.</verse>
				<verse number="5">ಯಾಜಕರು ತಲೆ ಬೋಳಿಸಿಕೊಳ್ಳಬಾರದು; ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಿಕೊಳ್ಳಬಾರದು; ದೇಹವನ್ನು ಗಾಯಮಾಡಿಕೊಳ್ಳಬಾರದು;</verse>
				<verse number="6">ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವೆ ಮಾಡುವ ದೇವರ ಹೆಸರಿಗೆ ಅಪಕೀರ್ತಿ ತರಬಾರದು. ತಮ್ಮ ದೇವರ ಆಹಾರವನ್ನು, ಅಂದರೆ ಸರ್ವೇಶ್ವರನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರಾಗಿರುವುದರಿಂದ ಪವಿತ್ರರಾಗಿರಬೇಕು.</verse>
				<verse number="7">ಯಾಜಕರು ತಮ್ಮ ದೇವರಿಗೆ ಮೀಸಲಾಗಿರುವುದರಿಂದ ವೇಶ್ಯೆಯನ್ನಾಗಲಿ, ಶೀಲಭ್ರಷ್ಟ ಸ್ತ್ರೀಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.</verse>
				<verse number="8">ಯಾಜಕರು ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀವು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಸರ್ವೇಶ್ವರನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀವು ಭಾವಿಸಬೇಕು.</verse>
				<verse number="9">ಯಾಜಕನ ಮಗಳು ಸೂಳೆತನದಿಂದ ನಿಂದೆಗೆ ಒಳಗಾದರೆ ತನ್ನ ತಂದೆಯನ್ನೂ ನಿಂದೆಗೆ ಒಳಪಡಿಸಿದವಳಾದಳು; ಅವಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.</verse>
				<verse number="10">ಯಾಜಕರಲ್ಲಿ ಪ್ರಧಾನನು, ಅಂದರೆ ಯಾವನು ತೈಲಾಭಿಷೇಕ ಹೊಂದಿ ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ ಅವನು ಸಂತಾಪ ಸೂಚನೆಗಾಗಿ ತನ್ನ ತಲೆಗೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು.</verse>
				<verse number="11">ಅವನು ಶವವಿರುವ ಯಾವ ಸ್ಥಳಕ್ಕೂ ಹೋಗಬಾರದು. ತಂದೆ ತಾಯಿಗಳ ಮರಣದ ನಿಮಿತ್ತ ತನ್ನನ್ನು ಅಪವಿತ್ರ ಮಾಡಿಕೊಳ್ಳಬಾರದು.</verse>
				<verse number="12">ಇದಕ್ಕಾಗಿ ದೇವಸ್ಥಾನವನ್ನು ಬಿಡಲೇಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವಮಂದಿರದ ಗೌರವಕ್ಕೆ ಕುಂದುಬರುವುದು. ಏಕೆಂದರೆ ತನ್ನ ದೇವರ ಅಭಿಷೇಕ ತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನೆ. ನಾನು ಸರ್ವೇಶ್ವರ.</verse>
				<verse number="13">ಅವನು ಪುರುಷ ಸಂಪರ್ಕವೇ ಇಲ್ಲದ ಯುವತಿಯನ್ನು ಮಾಡಿಕೊಳ್ಳಬೇಕೇ ಹೊರತು</verse>
				<verse number="14">ವಿಧವೆಯನ್ನಾಗಲಿ, ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ, ಶೀಲಭ್ರಷ್ಟ ಸ್ತ್ರೀಯನ್ನಾಗಲಿ, ವೇಶ್ಯೆಯನ್ನಾಗಲಿ ಮದುವೆ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯೇ ಹೆಣ್ಣನ್ನು ಪರಿಗ್ರಹಿಸಬೇಕು;</verse>
				<verse number="15">ಇಲ್ಲವಾದರೆ ಅವನ ಸಂತತಿ ಸ್ವಜನರೊಳಗೆ ಅಪವಾದಕ್ಕೆ ಗುರಿಯಾಗುವುದು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.</verse>
				<verse number="16">ಆರೋನನಿಗೆ ಹೀಗೆ ಆಜ್ಞಾಪಿಸಬೇಕೆಂದು ಮೋಶೆಗೆ ಸರ್ವೇಶ್ವರ ತಿಳಿಸಿದರು.</verse>
				<verse number="17">ನಿನ್ನ ಸಂತತಿಯವರಲ್ಲಿ, ತಲತಲಾಂತರದವರೆಗೂ, ಯಾವ ಅಂಗವಿಕಲನೂ ದೇವ ಆಹಾರವನ್ನು ಸಮರ್ಪಿಸಲು ನನ್ನ ಸನ್ನಿಧಿಗೆ ಬರಬಾರದು. ಅಂಗವಿಕಲನು ಈ ಸೇವೆಯನ್ನು ವಹಿಸಿಕೊಳ್ಳಲೇಕೂಡದು.</verse>
				<verse number="18">ಅವನು ಕುರುಡನಾಗಲಿ, ಕುಂಟನಾಗಲಿ, ಕೊರೆಮೂಗನಾಗಲಿ,</verse>
				<verse number="19">ಕೈಕಾಲು ಮುರುಕನಾಗಲಿ,</verse>
				<verse number="20">ಗೂನುಗುಜ್ಜಾರಿಯಾಗಲಿ, ಹೂಗಣ್ಣ ಕಾಯಿಗಣ್ಣನಾಗಲಿ, ಕಜ್ಜಿತುರಿಗಳುಳ್ಳವನಾಗಲಿ,</verse>
				<verse number="21">ನಪುಂಸಕನಾಗಲಿ, ಬೇರೆ ಯಾವ ಕಳಂಕವಿದ್ದವನಾಗಲಿ ಸರ್ವೇಶ್ವರನಿಗೆ ಹೋಮದ್ರವ್ಯಗಳನ್ನು ಸಮರ್ಪಿಸುವುದಕ್ಕೆ ಸನ್ನಿಧಿಗೆ ಬರಬಾರದು. ಅಂಥವನು ದೇಹದಲ್ಲಿ ದೋಷವಿರುವುದರಿಂದ ದೇವರ ಆಹಾರವನ್ನು ಸಮರ್ಪಿಸಲೇಬಾರದು.</verse>
				<verse number="22">ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದುದನ್ನೂ ಮಹಾಪರಿಶುದ್ಧವಾದುದನ್ನೂ ಅವನು ಊಟಮಾಡಬಹುದು.</verse>
				<verse number="23">ಆದರೆ ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಬಲಿಪೀಠದ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.</verse>
				<verse number="24">ಮೋಶೆ ಆರೋನನಿಗೂ ಅವನ ಮಕ್ಕಳಿಗೂ ಇಸ್ರಯೇಲರಿಗೂ ಈ ಆಜ್ಞೆಗಳನ್ನು ತಿಳಿಸಿದನು.</verse>
			</chapter>
			<chapter number="22">
				<verse number="1">ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದು ತಿಳಿಸಿದರು:</verse>
				<verse number="2">“ಆರೋನನು ಮತ್ತು ಅವನ ಮಕ್ಕಳು ತಾವು ಅಶುದ್ಧರಾಗಿರುವಾಗ ಇಸ್ರಯೇಲರಿಂದ ನನಗೆ ಸಮರ್ಪಿತವಾದ ಪರಿಶುದ್ಧ ಪದಾರ್ಥಗಳನ್ನು ಮುಟ್ಟಬಾರದೆಂದು ಆಜ್ಞಾಪಿಸು. ಅವರು ನನ್ನ ಪವಿತ್ರನಾಮದ ಘನತೆಗೆ ಕುಂದುತರಬಾರದು. ನಾನು ಸರ್ವೇಶ್ವರ.</verse>
				<verse number="3">ಅವರಿಗೆ ಹೀಗೆಂದು ವಿಧಿಸು: ನಿಮ್ಮಲ್ಲಿಯಾಗಲಿ, ನಿಮ್ಮ ಸಂತತಿಯವರಲ್ಲಿಯಾಗಲಿ ಯಾವನಾದರು ಅಶುದ್ಧನಾಗಿರುವಾಗ ಇಸ್ರಯೇಲರು ಸರ್ವೇಶ್ವರ ಸ್ವಾಮಿಗೆ ಮೀಸಲೆಂದು ಸಮರ್ಪಿಸುವ ಕಾಣಿಕೆಗಳ ಬಳಿಗೆ ಬಂದರೆ ಅವನನ್ನು ನನ್ನ ಸಾನ್ನಿಧ್ಯ ಸೇವೆಯಿಂದ ತೆಗೆದುಹಾಕಬೇಕು. ನಾನು ಸರ್ವೇಶ್ವರ.</verse>
				<verse number="4">“ಆರೋನನ ಸಂತತಿಯವರಲ್ಲಿ ಯಾವನಿಗಾದರು ಕುಷ್ಟರೋಗವಾಗಲಿ, ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ತಿನ್ನಕೂಡದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನು, ವೀರ್ಯಸ್ಖಲನ ಮಾಡಿಕೊಂಡವನು.</verse>
				<verse number="5">ಅಶುದ್ಧವಾದ ಕ್ರಿಮಿಕೀಟಮೂಷಕಾದಿಗಳನ್ನು ಅಥವಾ ಅಶುದ್ಧನಾದ ಮನುಷ್ಯನನ್ನು ಮುಟ್ಟಿದವನು ಆ ದಿನದ ಸಂಜೆಯವರೆಗೆ ಅಶುದ್ಧನಾಗಿರುವನು.</verse>
				<verse number="6">ಆದುದರಿಂದ ಸ್ನಾನಮಾಡುವ ತನಕ ನೈವೇದ್ಯ ಪದಾರ್ಥಗಳನ್ನು ತಿನ್ನಕೂಡದು.</verse>
				<verse number="7">ಹೊತ್ತು ಮುಳುಗಿದ ನಂತರ ಅವನು ಶುದ್ಧನಾಗಿ ನೈವೇದ್ಯ ಪದಾರ್ಥಗಳನ್ನು ಊಟಮಾಡಬಹುದು. ಏಕೆಂದರೆ ಅದು ಅವನ ಜೀವನಾಂಶ.</verse>
				<verse number="8">ತಾನಾಗಿ ಸತ್ತುಬಿದ್ದದ್ದನ್ನು ಅಥವಾ ಕಾಡುಮೃಗ ಕೊಂದದ್ದನ್ನು ಅವನು ತಿಂದು ಅಪವಿತ್ರ ಮಾಡಿಕೊಳ್ಳಬಾರದು. ನಾನು ಸರ್ವೇಶ್ವರ.</verse>
				<verse number="9">“ಈ ನನ್ನ ಆಜ್ಞೆಗಳನ್ನು ಅವರು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸಾಯುವರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.</verse>
				<verse number="10">“ಯಾಜಕನಲ್ಲದವನು ನೈವೇದ್ಯಪದಾರ್ಥಗಳನ್ನು ಊಟಮಾಡಕೂಡದು. ಅಂತೆಯೇ ಯಾಜಕನ ಅತಿಥಿಯಾಗಲಿ, ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.</verse>
				<verse number="11">ಆದರೆ ಯಾಜಕನು ಕೊಂಡುಕೊಂಡ ಗುಲಾಮರು, ಅವನ ಮನೆಯಲ್ಲಿ ಹುಟ್ಟಿದ ಗುಲಾಮರು ಅದನ್ನು ಊಟಮಾಡಬಹುದು.</verse>
				<verse number="12">ಯಾಜಕನ ಮಗಳು ಯಾಜಕನಲ್ಲದವನಿಗೆ ಮದುವೆಯಾಗಿದ್ದರೆ ಅವಳು ಆ ನೈವೇದ್ಯಪದಾರ್ಥಗಳನ್ನು ತಿನ್ನಕೂಡದು.</verse>
				<verse number="13">ಯಾಜಕನ ಮಗಳು ವಿಧವೆಯಾಗಿದ್ದರೆ, ಗಂಡಬಿಟ್ಟವಳಾಗಿದ್ದರೆ, ಮಕ್ಕಳಿಲ್ಲದೆ ಇದ್ದರೆ, ಬಾಲ್ಯದಲ್ಲಿ ತಂದೆಯ ಬಳಿ ಇದ್ದಂತೆಯೇ ಮತ್ತೆ ತಂದೆಯ ಮನೆ ಸೇರಿದ್ದರೆ ಆಕೆ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಊಟಮಾಡಲೇಬಾರದು.</verse>
				<verse number="14">“ಯಾಜಕನಲ್ಲದವನು ತಿಳಿಯದೆ ನೈವೇದ್ಯವಾದುದನ್ನು ಊಟಮಾಡಿದರೆ ಅಷ್ಟನ್ನೂ ಹಾಗು ಅದರ ಐದನೆಯ ಒಂದು ಭಾಗವನ್ನೂ ಯಾಜಕನಿಗೆ ತೆರಬೇಕು.</verse>
				<verse number="15">ಇಸ್ರಯೇಲರ ಸರ್ವೇಶ್ವರನಿಗೆ ಮೀಸಲೆಂದು ಇಟ್ಟ ನೈವೇದ್ಯಪದಾರ್ಥಗಳನ್ನು ಸಾಧಾರಣವೆಂದು ಅಸಡ್ಡೆಮಾಡಬಾರದು.</verse>
				<verse number="16">ಹಾಗೆ ಮಾಡಿದರೆ ತಾವು ಆ ನೈವೇದ್ಯಗಳನ್ನು ಊಟ ಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಗೆ ಗುರಿಯಾಗುವರು, ನನ್ನ ಸೇವೆಗೆ ಯಾಜಕರನ್ನು ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.</verse>
				<verse number="17">ಆರೋನನಿಗೆ, ಅವನ ಮಕ್ಕಳಿಗೆ ಹಾಗು ಇಸ್ರಯೇಲರೆಲ್ಲರಿಗೆ ಈ ಕೆಳಕಂಡಂತೆ ಆಜ್ಞಾಪಿಸಬೇಕೆಂದು ಸರ್ವೇಶ್ವರ ಮೋಶೆಗೆ ಹೇಳಿದರು:</verse>
				<verse number="18">“ಇಸ್ರಯೇಲರೇ ಆಗಲಿ, ಅವರ ನಡುವೆ ವಾಸಿಸುವವರೇ ಆಗಲಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ಸರ್ವೇಶ್ವರನಾದ ನನಗೆ ದಹನ ಬಲಿದಾನ ಮಾಡುವಾಗ</verse>
				<verse number="19">ಅದು ಸ್ವೀಕೃತವಾಗಬೇಕಾದರೆ ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು; ಹೋರಿ, ಟಗರು ಅಥವಾ ಹೋತವೇ ಆಗಿರಬೇಕು.</verse>
				<verse number="20">ಕುಂದುಕೊರತೆ ಇರುವಂಥದನ್ನು ಒಪ್ಪಿಸಬಾರದು; ಅದು ಸ್ವೀಕೃತವಾಗುವುದಿಲ್ಲ.</verse>
				<verse number="21">ಹರಕೆಯಾಗಿ ಅಥವಾ ಕಾಣಿಕೆಯಾಗಿ ಯಾರಾದರು ಶಾಂತಿಸಮಾಧಾನದ ಬಲಿಯನ್ನರ್ಪಿಸಲು ಆಶಿಸಿದರೆ ಅವರು ತರುವ ದನಕರುಗಳು, ಆಡು ಕುರಿಗಳು ಕಳಂಕರಹಿತವಾಗಿರಬೇಕು. ಯಾವುದಾದರೂ ಕುಂದುಕೊರತೆ ಇದ್ದರೆ ಆ ಬಲಿದಾನ ಸ್ವೀಕೃತವಾಗುವುದಿಲ್ಲ.</verse>
				<verse number="22">ಕುರುಡಾದುದು, ಹುಣ್ಣು, ಕಜ್ಜಿ, ತುರಿ ಉಳ್ಳದ್ದು ಇಂಥ ಪ್ರಾಣಿಗಳನ್ನು ಸರ್ವೇಶ್ವರನಿಗೆ ಸಮರ್ಪಿಸಬಾರದು; ಬಲಿಪೀಠದ ಮೇಲೆ ಹೋಮಮಾಡಕೂಡದು.</verse>
				<verse number="23">ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸ್ವೀಕೃತವಾಗುವುದಿಲ್ಲ.</verse>
				<verse number="24">ಬೀಜಹೊಡೆದ, ಕುಟ್ಟಿದ, ಒಡೆದ, ಕೊಯ್ದ ಪ್ರಾಣಿಯನ್ನು ಸರ್ವೇಶ್ವರನಿಗೆ ಸಮರ್ಪಿಸಕೂಡದು. ನಿಮ್ಮ ನಾಡಿನಲ್ಲಿ ಪ್ರಾಣಿಗಳಿಗೆ ಹೀಗೆ ಮಾಡಲೇಬಾರದು.</verse>
				<verse number="25">ಅನ್ಯದೇಶದವನಿಂದ ತೆಗೆದುಕೊಂಡ ಅಂಥ ಪ್ರಾಣಿಯನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು. ಅದು ಕುಂದುಳ್ಳದ್ದು, ಕಳಂಕಿತವಾದದ್ದು. ಆದಕಾರಣ ಸ್ವೀಕೃತವಾಗದು.”</verse>
				<verse number="26">ಮೋಶೆಗೆ ಸರ್ವೇಶ್ವರ ಹೀಗೆಂದರು.</verse>
				<verse number="27">“ಕರುವಾಗಲಿ, ಕುರಿಮರಿಯಾಗಲಿ, ಆಡುಮರಿಯಾಗಲಿ ಹುಟ್ಟಿ ಏಳು ದಿವಸ ಆದ ಬಳಿಕ ಅದನ್ನು ಸರ್ವೇಶ್ವರನಿಗೆ ಹೋಮವಾಗಿ ಸಮರ್ಪಿಸಿದರೆ ಅಂಗೀಕೃತವಾಗುವುದು.</verse>
				<verse number="28">ಈದ ಹಸುವನ್ನೂ ಅದರ ಎಳೇಕರುವನ್ನೂ ಅಂತೆಯೆ ಈದ ಆಡುಕುರಿಗಳನ್ನೂ ಅವುಗಳ ಎಳೇಮರಿಗಳನ್ನೂ ಒಂದೇ ದಿನದಲ್ಲಿ ವಧಿಸಬಾರದು.</verse>
				<verse number="29">“ನೀವು ಧನ್ಯವಾದ ಸಲ್ಲಿಸಲು ಸರ್ವೇಶ್ವರನಿಗೆ ಮಾಡುವ ಬಲಿದಾನವನ್ನು ಮೆಚ್ಚುಗೆಯಾದ ರೀತಿಯಲ್ಲಿ ಸಮರ್ಪಿಸಬೇಕು.</verse>
				<verse number="30">ಅದೇ ದಿವಸದಲ್ಲಿ ಅದನ್ನು ಊಟಮಾಡಬೇಕು. ಮರುದಿನದವರೆಗೆ ಕಿಂಚಿತ್ತನ್ನೂ ಮಿಗಿಸಬಾರದು. ನಾನು ಸರ್ವೇಶ್ವರ.</verse>
				<verse number="31">“ಈ ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. ನಾನು ಸರ್ವೇಶ್ವರ.</verse>
				<verse number="32">ನನ್ನ ಪವಿತ್ರ ನಾಮದ ಘನತೆಗೆ ಕುಂದು ತರಬಾರದು. ಇಸ್ರಯೇಲರೆಲ್ಲರು ನನ್ನನ್ನು ಪರಿಶುದ್ಧನೆಂದು ಪರಿಗಣಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರನು ನಾನು.</verse>
				<verse number="33">ನಿಮಗೆ ದೇವರಾಗಿರಬೇಕೆಂದು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದೆ. ನಾನು ಸರ್ವೇಶ್ವರ.</verse>
			</chapter>
			<chapter number="23">
				<verse number="1">ಇಸ್ರಯೇಲರಿಗೆ ಈ ಪ್ರಕಾರ ಆಜ್ಞಾಪಿಸಬೇಕೆಂದು ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದರು:</verse>
				<verse number="2">“ಸರ್ವೇಶ್ವರನಿಂದ ನೇಮಕಾವಾದ ಹಬ್ಬದಿನಗಳಲ್ಲಿ ದೇವಾರಾಧನೆಗಾಗಿ ಜನರು ಸಭೆಸೇರಬೇಕು. ಹಾಗೆ ನೇಮಕವಾದ ಹಬ್ಬದ ದಿನಗಳು ಇವು:</verse>
				<verse number="3">ಆರು ದಿನಗಳಲ್ಲಿ ನೀವು ದುಡಿದು ಕೆಲಸಮಾಡಬೇಕು. ಏಳನೆಯ ದಿನ ಯಾವ ದುಡಿಮೆಯನ್ನೂ ಮಾಡಬಾರದ ಸಬ್ಬತ್ ದಿನ. ಅಂದು ದೇವರ ಆರಾಧನೆಗಾಗಿ ಸಭೆ ಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ದುಡಿಮೆಯನ್ನೂ ಮಾಡಕೂಡದು. ನಿಮ್ಮ ನಿಮ್ಮ ನಿವಾಸಸ್ಥಳಗಳಲ್ಲೇ ಅದು ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನವಾಗಿರಬೇಕು.</verse>
				<verse number="4">ಸರ್ವೇಶ್ವರನಿಂದ ನೇಮಕವಾದ ಹಬ್ಬದ ಕಾಲಗಳಲ್ಲಿ ದೇವರ ಆರಾಧನೆಗಾಗಿ ಸಭೆಸೇರಬೇಕು. ಆ ಹಬ್ಬದ ದಿನಗಳನ್ನು ನಿಯಮಿತ ಕಾಲದಲ್ಲಿ ಪ್ರಕಟಿಸಬೇಕು.</verse>
				<verse number="5">“ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ವೇಳೆಯಲ್ಲಿ ಸರ್ವೇಶ್ವರ ನೇಮಿಸಿದ ಪಸ್ಕಹಬ್ಬವಾಗಬೇಕು.</verse>
				<verse number="6">ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ಹಬ್ಬವನ್ನು ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಅಂದು ಮೊದಲ್ಗೊಂಡು ಏಳು ದಿನಗಳಲ್ಲೂ ಹುಳಿರಹಿತ ರೊಟ್ಟಿಯನ್ನು ಊಟಮಾಡಬೇಕು.</verse>
				<verse number="7">ಮೊದಲನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು.</verse>
				<verse number="8">ಆ ಏಳು ದಿನಗಳಲ್ಲೂ ನೀವು ಸರ್ವೇಶ್ವರನಿಗೆ ದಹನಬಲಿಗಳನ್ನು ಸಮರ್ಪಿಸಬೇಕು. ಏಳನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಅಂದು ಯಾವ ದುಡಿಮೆಯನ್ನೂ ಕೈಗೊಳ್ಳಬಾರದು.</verse>
				<verse number="9">ಮೋಶೆಯ ಮುಖಾಂತರ ಇಸ್ರಯೇಲರಿಗೆ ಸರ್ವೇಶ್ವರ ಹೀಗೆ ಆಜ್ಞಾಪಿಸಿದರು:</verse>
				<verse number="10">“ನಾನು ನಿಮಗೆ ಕೊಡುವ ನಾಡನ್ನು ನೀವು ಸೇರಿದ ನಂತರ ಅಲ್ಲಿನ (ಜವೆಗೋದಿ) ಪೈರನ್ನು ಕೊಯ್ಯುವಾಗ ಪ್ರಥಮ ಫಲದ ಸಿವುಡನ್ನು ಯಾಜಕನ ಬಳಿಗೆ ತಂದೊಪ್ಪಿಸಬೇಕು.</verse>
				<verse number="11">ನೀವು ಅಂಗೀಕೃತರಾಗುವಂತೆ ಯಾಜಕನು ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯವಾಗಿ ಆರತಿಯೆತ್ತಬೇಕು. ಆ ಸಿವುಡನ್ನು ನೈವೇದ್ಯವಾಗಿ ಆರತಿಯೆತ್ತುವ ದಿನದಂದೇ</verse>
				<verse number="12">ನೀವು ಒಂದು ವರ್ಷದ ಕಳಂಕರಹಿತವಾದ ಟಗರನ್ನು ದಹನಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.</verse>
				<verse number="13">ಅದರ ಸಮೇತ ಎಣ್ಣೆಬೆರೆತ ಎರಡು ಕಿಲೋಗ್ರಾಂ ಹಿಟ್ಟನ್ನು ಧಾನ್ಯನೈವೇದ್ಯವಾಗಿ ಅರ್ಪಿಸಬೇಕು. ಸರ್ವೇಶ್ವರನಿಗೆ ಪ್ರಿಯವಾದ ಸುವಾಸನೆಯುಂಟುಮಾಡುವುದಕ್ಕೆ ಅದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯ ಒಂದು ಲೀಟರ್ ದ್ರಾಕ್ಷಾರಸ.</verse>
				<verse number="14">ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದ ಕಾಣಿಕೆಯನ್ನು ತಂದುಕೊಡುವವರೆಗೆ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ, ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಕೂಡದು. ನೀವು ಎಲ್ಲಿದ್ದರೂ ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮವಾಗಿದೆ.</verse>
				<verse number="15">ಸಬ್ಬತ್ ದಿನದ ಮಾರನೆಯ ದಿನ ಮೊದಲ್ಗೊಂಡು, ಅಂದರೆ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ಆರತಿ ಎತ್ತಿದ ದಿನ ಮೊದಲುಗೊಂಡು, ಪೂರ್ಣವಾಗಿ ಏಳುವಾರಗಳು ಮುಗಿಯುವಂತೆ, ಐವತ್ತು ದಿನಗಳನ್ನು ಎಣಿಸಬೇಕು.</verse>
				<verse number="16">ಏಳನೆಯ ಸಬ್ಬತ್ ದಿನದ ಮರುದಿನದಲ್ಲಿ ಸರ್ವೇಶ್ವರನಿಗೆ ಹೊಸಬೆಳೆಯ ನೈವೇದ್ಯವನ್ನು ಸಮರ್ಪಿಸಬೇಕು.</verse>
				<verse number="17">ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಎರಡು ಕಿಲೋಗ್ರಾಂ ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.</verse>
				<verse number="18">ಆ ರೊಟ್ಟಿಗಳೊಡನೆ ಒಂದು ವರ್ಷದ ಕಳಂಕರಹಿತವಾದ ಏಳು ಕುರಿಗಳನ್ನೂ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆಯೂ ಪಾನದ್ರವ್ಯದೊಡನೆಯೂ ಅಗ್ನಿ ಮೂಲಕ ಸರ್ವೇಶ್ವರನಿಗೆ ಪ್ರಿಯವಾದ ಸುವಾಸನೆಯನ್ನುಂಟುಮಾಡುವ ದಹನಬಲಿದಾನಗಳಾಗುವುವು.</verse>
				<verse number="19">ಅದಲ್ಲದೆ, ದೋಷಪರಿಹಾರಕ ಬಲಿಯಾಗಿ ಒಂದು ಹೋತವನ್ನೂ, ಶಾಂತಿಸಮಾಧನದ ಬಲಿಯಾಗಿ ಒಂದು ವರ್ಷದ ಎರಡು ಟಗರುಗಳನ್ನೂ ಸಮರ್ಪಿಸಬೇಕು.</verse>
				<verse number="20">ಯಾಜಕನು ಇವುಗಳನ್ನೂ ಪ್ರಥಮಫಲದ ರೊಟ್ಟಿಗಳನ್ನೂ ಎರಡು ಕುರಿಗಳನ್ನೂ ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯವಾಗಿ ಆರತಿ ಎತ್ತಬೇಕು. ಅವು ಸರ್ವೇಶ್ವರನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.</verse>
				<verse number="21">ಆ ದಿವಸದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕೆಂದು ಪ್ರಕಟಿಸಬೇಕು. ಅಂದು ಯಾವ ದುಡಿಮೆಯನ್ನು ಕೈಗೊಳ್ಳಬಾರದು. ನೀವು ಎಲ್ಲೇ ಇರಲಿ ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರುವುದು.</verse>
				<verse number="22">ನಿಮ್ಮ ನಾಡಿನ ಹೊಲ ಕೊಯ್ಯುವಾಗ ಮೂಲೆ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು, ಹಕ್ಕಲನ್ನು ಆಯಬಾರದು, ಬಡವರಿಗಾಗಿ ಹಾಗು ಪರದೇಶಿಗಳಿಗಾಗಿ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಸರ್ವೇಶ್ವರ.</verse>
				<verse number="23">ಸರ್ವೇಶ್ವರ ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ಹೇಳಿದರು:</verse>
				<verse number="24">ನೀನು ಏಳನೆಯ ತಿಂಗಳಿನ ಮೊದಲನೆಯ ದಿನ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಕೂಡಬೇಕು.</verse>
				<verse number="25">ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು; ಸರ್ವೇಶ್ವರನಿಗೆ ದಹನಬಲಿಯನ್ನು ಸಮರ್ಪಿಸಬೇಕು.</verse>
				<verse number="26">ಸರ್ವೇಶ್ವರ ಮೋಶೆಗೆ ಹೇಳಿದ ಮಾತುಗಳಿವು:</verse>
				<verse number="27">“ಅದೇ ಏಳನೆಯ ತಿಂಗಳಿನ ಹತ್ತನೆಯ ದಿನವನ್ನು ಸರ್ವದೋಷಪರಿಹಾರ ದಿನವನ್ನಾಗಿ ಆಚರಿಸಬೇಕು. ಅಂದು ದೇವಾರಾಧನೆಗಾಗಿ ಸಭೆಕೂಡಬೇಕು. ಪೂರ್ಣವಾಗಿ ಉಪವಾಸ ಮಾಡಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನ ಬಲಿದಾನ ಮಾಡಬೇಕು.</verse>
				<verse number="28">ಅ ದಿನದಂದು ಯಾವ ದುಡಿಮೆಯನ್ನೂ ಕೈಗೊಳ್ಳಬಾರದು. ಅದು ದೋಷಪರಿಹಾರಕ ದಿನ. ಅಂದು ನಿಮ್ಮ ಪರವಾಗಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು.</verse>
				<verse number="29">ಯಾವನಾದರು ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.</verse>
				<verse number="30">ಯಾವನಾದರು ಆ ದಿನ ಕಿಂಚಿತ್ತಾದರು ದುಡಿದರೆ ಅವನನ್ನು ಇಸ್ರಯೇಲರಿಂದ ಅಳಿಸಿಬಿಡುವೆನು.</verse>
				<verse number="31">ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು. ನೀವು ಎಲ್ಲೇ ವಾಸವಾಗಿದ್ದರೂ, ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮ.</verse>
				<verse number="32">ಆ ದಿನವು ಸಂಪೂರ್ಣ ವಿರಾಮವುಳ್ಳ ವಿಶ್ರಾಂತಿದಿನವಾಗಿರಬೇಕು. ಅಂದು ಉಪವಾಸದಿಂದಿರಬೇಕು. ಆ ತಿಂಗಳಿನ ಒಂಬತ್ತನೆಯ ದಿನದ ಸಂಜೆ ಪ್ರಾರಂಭಿಸಿ ಮರುದಿನದ ಸಂಜೆಯವರೆಗೆ ನೀವು ಆ ವಿರಾಮ ದಿನವನ್ನು ಆಚರಿಸಬೇಕು.</verse>
				<verse number="33">ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ಸರ್ವೇಶ್ವರ ಮೋಶೆಗೆ ತಿಳಿಸಿದರು:</verse>
				<verse number="34">“ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲ್ಗೊಂಡು ಏಳು ದಿನದವರೆಗೆ ಪರ್ಣಕುಟೀರಗಳ ಜಾತ್ರೆಯನ್ನು ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು.</verse>
				<verse number="35">ಮೊದಲನೆಯ ದಿನ ದೇವಾರಾಧನೆಗಾಗಿ ಸಭೆ ಸೇರಬೇಕು; ಯಾವ ದುಡಿಮೆಯನ್ನೂ ಕೈಗೊಳ್ಳಬಾರದು.</verse>
				<verse number="36">ಆ ಏಳು ದಿನಗಳಲ್ಲೂ ನೀವು ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿದಾನ ಮಾಡಬೇಕು. ಎಂಟನೆಯ ದಿನದಂದು ದೇವಾರಾಧನೆಗಾಗಿ ಸಭೆಸೇರಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿದಾನ ಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಅಂದು ಎಲ್ಲ ದುಡಿಮೆಯನ್ನು ನಿಲ್ಲಿಸಬೇಕು.</verse>
				<verse number="37">“ಸರ್ವೇಶ್ವರ ನೇಮಿಸಿರುವ ಸಬ್ಬತ್ ದಿನಗಳನ್ನು ಮತ್ತು ಮೇಲೆ ಹೇಳಿದ ಸ್ವಾಮಿಯ ಹಬ್ಬದ ದಿನಗಳನ್ನು ನೀವು ಆಚರಿಸಬೇಕು. ಆ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಸೇರುವಂತೆ ಜನರಿಗೆ ಪ್ರಕಟಿಸಬೇಕು.</verse>
				<verse number="38">ಸರ್ವೇಶ್ವರನಿಗೆ ಒಪ್ಪಿಸಬೇಕಾದ ಕಪ್ಪಕಾಣಿಕೆಗಳನ್ನೂ ಹರಕೆಗಳನ್ನೂ ಸಲ್ಲಿಸಬೇಕಲ್ಲದೆ, ಮೇಲೆ ಸೂಚಿಸಿರುವ ಹಬ್ಬಗಳಲ್ಲಿ ಆಯಾ ದಿನಕ್ಕೆ ನೇಮಿಸಿರುವ ಪ್ರಕಾರ ದಹನಬಲಿ, ನೈವೇದ್ಯದ್ರವ್ಯ, ಶಾಂತಿಸಮಾಧಾನದ ಬಲಿ, ಪಾನದ್ರವ್ಯ ಇವುಗಳನ್ನು ತಂದು ಸರ್ವೇಶ್ವರನ ಸನ್ನಿಧಿಯಲ್ಲಿ ಹೋಮಮಾಡಬೇಕು.</verse>
				<verse number="39">ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ - ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಸರ್ವೇಶ್ವರ ನೇಮಿಸಿದ ಪರ್ಣಕುಟೀರಗಳ ಜಾತ್ರೆಯನ್ನು ಏಳುದಿನದವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿ ಹಾಗು ಎಂಟನೆಯ ದಿನದಲ್ಲಿ ಎಲ್ಲ ದುಡಿಮೆಯನ್ನು ನಿಲ್ಲಿಸಿ ಸಂಪೂರ್ಣ ವಿರಾಮದಿಂದಿರಬೇಕು.</verse>
				<verse number="40">ಮೊದಲನೆಯ ದಿನ ಮರಗಳಿಂದ ಒಳ್ಳೊಳ್ಳೆಯ ಹಣ್ಣುಗಳನ್ನು, ಖರ್ಜೂರ ಮರದ ಗರಿಗಳನ್ನು, ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನು ಮತ್ತು ನೀರಿನ ಕಾಲುವೆಗಳ ಬಳಿ ಬೆಳೆಯುವ ನೀರವಂಜಿ ಚಿಗುರುಗಳನ್ನು ತೆಗೆದುಕೊಂಡು ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಏಳು ದಿನಗಳೂ ಸಂಭ್ರಮದಿಂದಿರಬೇಕು.</verse>
				<verse number="41">ಹೀಗೆ ಪ್ರತಿ ವರ್ಷ ಏಳುದಿನಗಳ ತನಕ ಈ ಉತ್ಸವವನ್ನು ಆಚರಿಸಬೇಕು. ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮ. ಏಳನೆಯ ತಿಂಗಳಲ್ಲಿ ಇದನ್ನು ಆಚರಿಸಬೇಕು.</verse>
				<verse number="42">ಆ ಏಳು ದಿನಗಳು ನೀವು ಪರ್ಣಕುಟೀರಗಳಲ್ಲೇ ವಾಸವಾಗಿರಬೇಕು. ಸ್ವದೇಶೀಯರಾದ ಇಸ್ರಯೇಲರೆಲ್ಲರು ಪರ್ಣಕುಟೀರಗಳಲ್ಲೇ ವಾಸವಾಗಿರಬೇಕು.</verse>
				<verse number="43">ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದಾಗ ಇಸ್ರಯೇಲರು ಪರ್ಣಕುಟೀರಗಳಲ್ಲಿ ವಾಸವಾಗಿರುವಂತೆ ಮಾಡಿದೆನೆಂಬುದಾಗಿ ಇದರಿಂದ ನಿಮ್ಮ ಸಂತತಿಯವರಿಗೆ ತಿಳಿಯುವುದು. ನಾನು ನಿಮ್ಮ ದೇವರಾದ ಸರ್ವೇಶ್ವರ.”</verse>
				<verse number="44">ಹೀಗೆ ಮೋಶೆ ಸರ್ವೇಶ್ವರ ಸ್ವಾಮಿಯಿಂದ ನೇಮಕವಾದ ಹಬ್ಬಗಳ ವಿಷಯವಾಗಿ ಇಸ್ರಯೇಲರಿಗೆ ವಿವರಿಸಿದನು.</verse>
			</chapter>
			<chapter number="24">
				<verse number="1">ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದು ತಿಳಿಸಿದರು:</verse>
				<verse number="2">“ದೇವಸ್ಥಾನದಲ್ಲಿರುವ ದೀಪಗಳನ್ನು ಪ್ರತಿನಿತ್ಯವೂ ಉರಿಸಬೇಕು. ಇದಕ್ಕಾಗಿ ಇಸ್ರಯೇಲರು ಎಣ್ಣೇಮರದ ಕಾಯಿಗಳನ್ನು ಕುಟ್ಟಿ ತೆಗೆದ ನಿರ್ಮಲವಾದ ಅಪ್ಪಟ ಎಣ್ಣೆಯನ್ನು ನಿನಗೆ ತಂದುಕೊಡಬೇಕೆಂದು ಅವರಿಗೆ ಆಜ್ಞಾಪಿಸು.</verse>
				<verse number="3">ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ ಆ ದೀಪಗಳು ಉರಿಯುತ್ತಿರಬೇಕು. ಅವು ಸರ್ವೇಶ್ವರನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಉದಯದವರೆಗೆ ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತನಿಯಮ.</verse>
				<verse number="4">ಆರೋನನು ಪ್ರತಿನಿತ್ಯವೂ ಸರ್ವೇಶ್ವರನ ಸನ್ನಿಧಿಯಲ್ಲಿ ಹಣತೆಗಳನ್ನು ಆ ಚೊಕ್ಕ ಬಂಗಾರದ ದೀಪವೃಕ್ಷದ ಮೇಲೆ ಸರಿಯಾಗಿ ಇಡಬೇಕು.</verse>
				<verse number="5">“ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು. ಪ್ರತಿಯೊಂದು ರೊಟ್ಟಿ ಎರಡೆರಡು ಕಿಲೋಗ್ರಾಂನದಾಗಿರಬೇಕು.</verse>
				<verse number="6">ಅವುಗಳನ್ನು ಆರಾರರ ಮೇರೆಗೆ ಎರಡು ರಾಶಿಗಳಾಗಿ ಚೊಕ್ಕ ಬಂಗಾರದ ಮೇಜಿನ ಮೇಲೆ ಸರ್ವೇಶ್ವರನ ಸಮ್ಮುಖದಲ್ಲಿ ಇಡಬೇಕು.</verse>
				<verse number="7">ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಸಾಂಬ್ರಾಣಿಯನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸಲು ಆ ಸಾಂಬ್ರಾಣಿಯನ್ನು ಸರ್ವೇಶ್ವರನಿಗೆ ಹೋಮಮಾಡಬೇಕು.</verse>
				<verse number="8">ಶಾಶ್ವತವಾದ ನಿಬಂಧನೆಯ ಮೇರೆಗೆ ಯಾಜಕನು ಯಾವಾಗಲೂ ಪ್ರತಿ ಸಬ್ಬತ್ ದಿನದಲ್ಲಿ ರೊಟ್ಟಿಗಳನ್ನು ತಂದು ಸರ್ವೇಶ್ವರನ ಸನ್ನಿಧಿಯಲ್ಲಿ ಕ್ರಮಪಡಿಸಿ ಅವುಗಳನ್ನು ಇಸ್ರಯೇಲರ ಪರವಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.</verse>
				<verse number="9">ಅವು ಆರೋನನಿಗೂ ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಆ ರೊಟ್ಟಿಗಳನ್ನು ದೇವಸ್ಥಾನದ ಪ್ರಾಕಾರದಲ್ಲೇ ತಿನ್ನಬೇಕು. ಅವು ಸರ್ವೇಶ್ವರನಿಗೆ ಸಮರ್ಪಿತವಾದ ದಹನದ್ರವ್ಯಗಳಿಗೆ ಸೇರಿದವುಗಳಾಗಿರುವುದರಿಂದ ಶಾಶ್ವತ ನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು.</verse>
				<verse number="10">ಇಸ್ರಯೇಲ್ ಮಹಿಳೆಯೊಬ್ಬಳಿಗೆ ಈಜಿಪ್ಟಿನ ಪುರುಷನಿಂದ ಹುಟ್ಟಿದ ಒಬ್ಬ ವ್ಯಕ್ತಿ ಇದ್ದನು. ಇವನು ಇಸ್ರಯೇಲರ ಪಾಳೆಯಕ್ಕೆ ಬಂದು ಇಸ್ರಯೇಲನೊಬ್ಬನ ಸಂಗಡ ಜಗಳವಾಡಿ, ಬೈದುದು ಮಾತ್ರವಲ್ಲದೆ ಸರ್ವೇಶ್ವರ ಸ್ವಾಮಿಯನ್ನು ದೂಷಿಸಿ ಶಾಪ ಹಾಕಿದನು.</verse>
				<verse number="11">ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. ಆ ವ್ಯಕ್ತಿಯ ತಾಯಿ ದಾನ್ ಕುಲದ ದಿಬ್ರೀಯ ಮಗಳು ‘ಶೆಲೋಮೀತ್’ ಎಂದು ಅವಳ ಹೆಸರು.</verse>
				<verse number="12">ಅವನ ವಿಷಯವಾಗಿ ಸರ್ವೇಶ್ವರನ ತೀರ್ಪನ್ನು ತಿಳಿದುಕೊಳ್ಳುವಷ್ಟು ಕಾಲ ಅವನನ್ನು ಕಾವಲಲ್ಲಿ ಇರಿಸಲಾಯಿತು.</verse>
				<verse number="13">ಆಗ ಮೋಶೆಗೆ ಸರ್ವೇಶ್ವರ ಹೀಗೆಂದು ತಿಳಿಸಿದರು:</verse>
				<verse number="14">ಆ ದೇವದೂಷಕನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನಾಡಿದ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರು ಅವನ ತಲೆಯ ಮೇಲೆ ಕೈಚಾಚಬೇಕು. ಅನಂತರ ಸಮಾಜದವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು.</verse>
				<verse number="15">ಮತ್ತು ಇಸ್ರಯೇಲರಿಗೆ ನೀನು ಹೀಗೆ ಹೇಳಬೇಕು: ತನ್ನ ದೇವರನ್ನು ದೂಷಿಸಿದವನು ಆ ದೋಷದ ಫಲವನ್ನು ಅನುಭವಿಸಬೇಕು.</verse>
				<verse number="16">ಸರ್ವೇಶ್ವರನ ಹೆಸರನ್ನು ನಿಂದಿಸಿದವನಿಗೆ ಮರಣಶಿಕ್ಷೆಯಾಗಬೇಕು; ಸಮಾಜದವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಅನ್ಯದೇಶೀಯನಾಗಿರಲಿ, ಸ್ವದೇಶೀಯನಾಗಿರಲಿ ಸರ್ವೇಶ್ವರನ ಹೆಸರನ್ನು ನಿಂದಿಸಿದರೆ ಅವನಿಗೆ ಮರಣಶಿಕ್ಷೆಯಾಗಬೇಕು.</verse>
				<verse number="17">ಕೊಲೆ ಮಾಡಿದವನಿಗೆ ಮರಣದಂಡನೆಯಾಗಬೇಕು.</verse>
				<verse number="18">ಪಶುಪ್ರಾಣಿಯನ್ನು ಹೊಡೆದು ಕೊಂದವನಿಂದ ಅದಕ್ಕೆ ಪ್ರತಿಯಾಗಿ ಈಡನ್ನು ಕೊಡಿಸಬೇಕು; ಪ್ರಾಣಿಗೆ ಪ್ರತಿಯಾಗಿ ಪ್ರಾಣಿಯನ್ನು ಕೊಡಿಸಬೇಕು.</verse>
				<verse number="19">ಯಾವನಾದರು ಮತ್ತೊಬ್ಬನನ್ನು ಅಂಗಹೀನನನ್ನಾಗಿ ಮಾಡಿದರೆ ಅವನು ಮಾಡಿದಂತೆಯೆ ಅವನಿಗೆ ಮಾಡಿಸಬೇಕು.</verse>
				<verse number="20">ಅವಯವವನ್ನು ಮುರಿಯುವುದೇ ಶಿಕ್ಷೆ. ಕಣ್ಣಿಗೆ ಪ್ರತಿಯಾಗಿ ಕಣ್ಣು, ಹಲ್ಲಿಗೆ ಪ್ರತಿಯಾಗಿ ಹಲ್ಲು ಕೀಳಿಸಬೇಕು. ಮತ್ತೊಬ್ಬನನ್ನು ಅಂಗವಿಕಲನನ್ನಾಗಿ ಮಾಡಿದವನಿಗೆ ಅದೇ ರೀತಿ ಪ್ರತೀಕಾರ ಮಾಡಿಸಬೇಕು.</verse>
				<verse number="21">ಪಶುಪ್ರಾಣಿಯನ್ನು ಕೊಂದವನಿಗೆ ಅದಕ್ಕೆ ಬದಲಾಗಿ ಈಡುಕೊಡಬೇಕು; ಮನುಷ್ಯನನ್ನು ಕೊಂದವನಿಗೆ ಮರಣಶಿಕ್ಷೆಯಾಗಬೇಕು.</verse>
				<verse number="22">ಅನ್ಯರಿಗಾಗಲಿ ಸ್ವಜನರಿಗಾಗಲಿ ಪಕ್ಷಪಾತವಿಲ್ಲದೆ ಒಂದೇ ನಿಯಮವಿರಬೇಕು. ನಾನು ನಿಮ್ಮ ದೇವರಾದ ಸರ್ವೇಶ್ವರ.”</verse>
				<verse number="23">ಮೋಶೆ ಈ ಮಾತುಗಳನ್ನು ಇಸ್ರಯೇಲರಿಗೆ ತಿಳಿಸಿದನು. ಅವರು ಆ ದೂಷಕನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದರು. ಸರ್ವೇಶ್ವರ ಸ್ವಾಮಿ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು.</verse>
			</chapter>
			<chapter number="25">
				<verse number="1">ಇಸ್ರಯೇಲರಿಗೆ ಹೀಗೆ ಆಜ್ಞಾಪಿಸಬೇಕೆಂದು ಸರ್ವೇಶ್ವರ ಸ್ವಾಮಿ ಮೋಶೆಗೆ ಸೀನಾಯಿ ಬೆಟ್ಟದಲ್ಲಿ ಹೇಳಿದರು:</verse>
				<verse number="2">“ಸರ್ವೇಶ್ವರ ನಿಮಗೆ ಕೊಡುವ ನಾಡಿಗೆ ನೀವು ಬಂದಾಗ ಆ ನಾಡು ಸರ್ವೇಶ್ವರನ ಗೌರವಾರ್ಥ ವಿಶ್ರಾಂತಿಯನ್ನು ಆಚರಿಸಬೇಕು.</verse>
				<verse number="3">ಆರು ವರ್ಷಗಳು ನೀವು ಹೊಲದಲ್ಲಿ ಬಿತ್ತನೆ ಮಾಡಬಹುದು. ದ್ರಾಕ್ಷಿತೋಟದ ಕೆಲಸವನ್ನು ಮಾಡಬಹುದು. ಹೊಲತೋಟಗಳ ಬೆಳೆಗಳನ್ನು ಸಂಗ್ರಹಿಸಬಹುದು.</verse>
				<verse number="4">ಆದರೆ ಏಳನೆಯ ವರ್ಷ ಯಾವ ವ್ಯವಸಾಯವನ್ನೂ ಮಾಡಬಾರದು. ಅದು ವಿಶ್ರಾಂತಿಕಾಲವಾಗಿಯೂ ಸರ್ವೇಶ್ವರನ ಗೌರವಾರ್ಥ ಸಬ್ಬತ್ ಕಾಲವಾಗಿಯೂ ಇರಬೇಕು. ಆ ವರ್ಷ ಹೊಲದಲ್ಲಿ ವ್ಯವಸಾಯ ಮಾಡಬಾರದು; ದ್ರಾಕ್ಷೀ ತೋಟದ ಕೆಲಸವನ್ನೂ ಕೈಬಿಡಬೇಕು.</verse>
				<verse number="5">ಹೊಲದಲ್ಲಿ ತಾನಾಗಿ ಬೆಳೆದ ಫಸಲನ್ನು ನೀವು ಕೂಡಿಸಿಟ್ಟುಕೊಳ್ಳಬಾರದು. ತಾನಾಗಿಯೇ ಬೆಳೆದ ದ್ರಾಕ್ಷಿ ಹಣ್ಣನ್ನು ಶೇಖರಿಸಿಟ್ಟುಕೊಳ್ಳಬಾರದು. ಆ ವರ್ಷ ಪೂರ್ತಿ ಭೂಮಿಗೆ ಸಂಪೂರ್ಣ ವಿಶ್ರಾಂತಿಯಿರಬೇಕು.</verse>
				<verse number="6">ಆದರೆ ಅಂಥ ಸಬ್ಬತ್ ಸಂವತ್ಸರದಲ್ಲಿ ಭೂಮಿ ತಾನಾಗಿಯೇ ಬೆಳೆದದ್ದು ನಿಮಗೆ, ನಿಮ್ಮ ದಾಸದಾಸಿಯರಿಗೆ, ಕೂಲಿಯವರಿಗೆ</verse>
				<verse number="7">ಮತ್ತು ನಿಮ್ಮಲ್ಲಿ ತಂಗಿರುವ ಪರದೇಶಿಯರಿಗೆ ಹಾಗು ನಿಮ್ಮ ಪಶುಪ್ರಾಣಿಗಳಿಗೆ ಮತ್ತು ನಾಡಿನ ಕಾಡುಮೃಗಗಳಿಗೆ ಆಹಾರವಾಗಬಹುದು.</verse>
				<verse number="8">“ಅದಲ್ಲದೆ, ಏಳು ವರ್ಷಕ್ಕೆ ಒಂದರಂತೆ ಏಳು ಸಬ್ಬತ್ ವರ್ಷಗಳನ್ನು ಎಣಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲ, ಅಂದರೆ ನಾಲ್ವತ್ತೊಂಬತ್ತು ವರ್ಷಗಳು ಕಳೆದ ಮೇಲೆ</verse>
				<verse number="9">ಏಳನೆಯ ತಿಂಗಳಿನ ಹತ್ತನೆಯ ದಿವಸ ನಿಮ್ಮ ನಾಡಿನಲ್ಲೆಲ್ಲಾ ಕೊಂಬೂದಿಸಬೇಕು.</verse>
				<verse number="10">ನೀವು ಆ ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಬೇಕು. ಆ ವರ್ಷ ನಾಡಿನ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂದು ಸಾರಬೇಕು. ಅದು ‘ಜೂಬಿಲಿ’ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಹಾಗು ಸ್ವಜನರ ಬಳಿಗೂ ಹೋಗಿ ಇರಬಹುದು.</verse>
				<verse number="11">ಆ ಐವತ್ತನೆಯ ವರ್ಷದಲ್ಲಿ, ಅಂದರೆ ‘ಜೂಬಿಲಿ’ ಸಂವತ್ಸರದಲ್ಲಿ ನೀವು ಬಿತ್ತನೆ ಮಾಡಬಾರದು; ತಾನಾಗಿ ಬೆಳೆದ ಫಸಲನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ಕೃಷಿಮಾಡದೆ ಬಿಟ್ಟ ದ್ರಾಕ್ಷೀತೋಟದ ಹಣ್ಣನ್ನು ಸಂಗ್ರಹಿಸಬಾರದು.</verse>
				<verse number="12">ಅದು ಜೂಬಿಲಿ ವರ್ಷವಾದುದರಿಂದ ನೀವು ಅದನ್ನು ಮೀಸಲಾದದ್ದೆಂದು ಭಾವಿಸಬೇಕು. ಹೊಲದಲ್ಲಿ ತಾನಾಗಿ ಬೆಳೆದದ್ದನ್ನು ಊಟಮಾಡಬಹುದು.</verse>
				<verse number="13">ಜೂಬಿಲಿ ವರ್ಷದಲ್ಲಿ ನಿಮ್ಮ ನಿಮ್ಮ ಸ್ವಂತ ಭೂಮಿಗಳು ಮರಳಿ ನಿಮ್ಮ ವಶಕ್ಕೆ ಬರುವುವು.</verse>
				<verse number="14">ನೀವು ಸ್ಥಿರಸೊತ್ತನ್ನು ಸ್ವದೇಶದವರೊಡನೆ ಕ್ರಯ-ವಿಕ್ರಯ ಮಾಡುವಾಗ ಇದರ ವಿಷಯದಲ್ಲಿ ಅನ್ಯಾಯ ಮಾಡಬಾರದು.</verse>
				<verse number="15">ಕಳೆದ ಜೂಬಿಲಿ ವರ್ಷದಿಂದ ಇಷ್ಟು ವರ್ಷ ಆಯಿತೆಂದು ಲೆಕ್ಕಿಸಿ ಸ್ವದೇಶದವನಿಂದ ಕ್ರಯಕ್ಕೆ ತೆಗೆದುಕೊಳ್ಳಬೇಕು; ಅಂತೆಯೇ ಮಾರುವವನು ಇಷ್ಟು ವರ್ಷಗಳ ಬೆಳೆಯಾಯಿತೆಂದು ಲೆಕ್ಕಿಸಿ ಕ್ರಯಕ್ಕೆ ಕೊಡಬೇಕು.</verse>
				<verse number="16">ಮುಂದಣ ಜೂಬಿಲಿ ಸಂವತ್ಸರದ ತನಕ ಹೆಚ್ಚು ವರ್ಷಗಳಾದರೆ ಭೂಮಿಯ ಕ್ರಯವನ್ನು ಹೆಚ್ಚಿಸಬೇಕು; ಕಡಿಮೆಯಾದರೆ ತಗ್ಗಿಸಬೇಕು. ಏಕೆಂದರೆ ಮಾರುವವನು ಭೂಮಿಯನ್ನಲ್ಲ, ಬೆಳೆಗಳನ್ನು ಲೆಕ್ಕಿಸಿ ಮಾರುತ್ತಾನಷ್ಟೆ.</verse>
				<verse number="17">ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯ ಮಾಡಬಾರದು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ನಿಮ್ಮ ದೇವರಾದ ಸರ್ವೇಶ್ವರನು.</verse>
				<verse number="18">“ನನ್ನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು. ಆಗ ನೀವು ನಾಡಿನಲ್ಲಿ ನಿರ್ಭಯವಾಗಿ ಬಾಳುವಿರಿ.</verse>
				<verse number="19">ನಿಮ್ಮ ಭೂಮಿ ಫಲವತ್ತಾಗುವುದು; ನಿಮಗೆ ಸಮೃದ್ಧಿಯಾದ ಊಟ ದೊರಕುವುದು ಮತ್ತು ಆ ನಾಡಿನಲ್ಲಿ ನಿರ್ಭಯವಾಗಿ ವಾಸಮಾಡುವಿರಿ.</verse>
				<verse number="20">ಆದರೆ ಆ ಏಳನೆಯ ವರ್ಷದಲ್ಲಿ ಬಿತ್ತನೆ ಮಾಡುವುದಕ್ಕಾಗಲಿ, ಬೆಳೆದದ್ದನ್ನು ಕೂಡಿಸಿಟ್ಟುಕೊಳ್ಳುವುದಕ್ಕಾಗಲಿ ಅಪ್ಪಣೆಯಿರುವುದಿಲ್ಲ. ಹಾಗಾದರೆ ಆ ವರ್ಷ ಏನು ತಿನ್ನಬೇಕೆಂದು ವಿಚಾರಿಸುತ್ತೀರೋ? ನಾನು ಹೇಳುವುದನ್ನು ಕೇಳಿ:</verse>
				<verse number="21">ಆರನೆಯ ವರ್ಷದ ಬೆಳೆ ನನ್ನ ಪೂರ್ಣಾನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು.</verse>
				<verse number="22">ಎಂಟನೆಯ ವರ್ಷದಲ್ಲಿ ಬಿತ್ತನೆ ಮಾಡಿ ಅದರ ಬೆಳೆ ದೊರೆಯುವ ತನಕ, ಅಂದರೆ ಒಂಬತ್ತನೆಯ ವರ್ಷದವರೆಗೆ ಹಿಂದಿನ ಬೆಳೆಯಿಂದಲೇ ಜೀವನ ಮಾಡುವಿರಿ.</verse>
				<verse number="23">“ಭೂಮಿಯನ್ನು ಶಾಶ್ವತವಾಗಿ ವಿಕ್ರಯಿಸಿ ಬಿಡಬಾರದು. ಏಕೆಂದರೆ ಭೂಮಿ ನನ್ನದು. ನೀವಾದರೋ ಪರವಾಸಿಗಳು, ನನ್ನ ಆಶ್ರಯದಲ್ಲಿ ತಂಗಿರುವವರು.</verse>
				<verse number="24">ನಿಮ್ಮಲ್ಲಿ ಮತ್ತೊಬ್ಬನ ಸೊತ್ತು ನಿಮ್ಮ ವಶಕ್ಕೆ ಬಂದರೆ ಅದನ್ನು ಈಡುಕೊಟ್ಟು ಬಿಡಿಸಿಕೊಳ್ಳುವ ಹಕ್ಕು, ಕೊಟ್ಟವನಿಗೆ ಇರಬೇಕು.</verse>
				<verse number="25">ನಿಮ್ಮ ಸ್ವಜನರಲ್ಲಿ ಒಬ್ಬನು ಬಡವನಾಗಿ ತನ್ನ ಭೂಮಿಯನ್ನು ಏನಾದರು ಮಾರಿಕೊಂಡರೆ ಅವನ ಸಮೀಪ ನೆಂಟನು ಇದನ್ನು ಬಿಡಿಸಿಕೊಳ್ಳಬೇಕು.</verse>
				<verse number="26">ಬಿಡಿಸಬಲ್ಲ ನೆಂಟನು ಇಲ್ಲದೆಹೋದರೆ, ಮಾರಿದವನೇ ಮತ್ತೆ ಬಿಡಿಸಿಕೊಳ್ಳುವಷ್ಟು ಉತ್ತಮ ಸ್ಥಿತಿಗೆ ಬಂದರೆ,</verse>
				<verse number="27">ಆ ಭೂಮಿಯನ್ನು ಮಾರಿದಂದಿನಿಂದ ಕಳೆದ ವರ್ಷಗಳನ್ನು ಬಿಟ್ಟು, ಉಳಿದ ಅವಧಿಗೆ ಕ್ರಯಕೊಟ್ಟು ತನ್ನ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಹುದು.</verse>
				<verse number="28">ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು. ಆಗ ಆ ಭೂಮಿ ಮರಳಿ ಅವನ ವಶಕ್ಕೆ ಬರುವುದು.</verse>
				<verse number="29">“ಯಾವನಾದರು ಕೋಟೆಯಿರುವ ಪಟ್ಟಣದ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನದಿಂದ ಒಂದು ವರ್ಷ ಪೂರ್ತಿಯಾಗುವುದರೊಳಗೆ ಈಡುಕೊಟ್ಟು ಬಿಡಿಸಬಹುದು. ಒಂದು ವರ್ಷ ಪೂರ್ತಿ ಅದನ್ನು ಬಿಡಿಸುವ ಹಕ್ಕು ಅವನಿಗಿರುವುದು.</verse>
				<verse number="30">ಕೋಟೆಯಿರುವ ಪಟ್ಟಣದ ಆ ಮನೆಯನ್ನು ಒಂದು ವರ್ಷದೊಳಗೆ ಬಿಡಿಸಲಾಗದೆ ಹೋದರೆ ಅದು ಜೂಬಿಲಿ ಸಂವತ್ಸರದಲ್ಲೂ ಬಿಡುಗಡೆ ಆಗದೆ ಕ್ರಯಕೊಟ್ಟವನಿಗೂ ಅವನ ಸಂತತಿಯವರಿಗೂ ಶಾಶ್ವತವಾಗಿ ಉಳಿಯುವುದು.</verse>
				<verse number="31">ಕೋಟೆಯಿಲ್ಲದ ಊರುಗಳಲ್ಲಿರುವ ಮನೆಗಳಲ್ಲಿ ಬಯಲಿನ ಹೊಲಗಳಂತೆ ಎಣಿಸಬೇಕು. ಅವುಗಳನ್ನು ಬಿಡಿಸಿಕೊಳ್ಳುವ ಹಕ್ಕು ಇರುವುದು. ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವುವು.</verse>
				<verse number="32">ಆದರೆ ಲೇವಿಯರ ಸೊತ್ತಾಗಿರುವ ಪೇಟೆಗಳಲ್ಲಿನ ಮನೆಗಳು ಮಾರಲ್ಪಟ್ಟರೆ ಅವುಗಳನ್ನು ಬಿಡಿಸಿಕೊಳ್ಳುವ ಹಕ್ಕು ಲೇವಿಯರಿಗೆ ಯಾವಾಗಲು ಇರುವುದು.</verse>
				<verse number="33">ಲೇವಿಯರಲ್ಲಿ ಯಾರೂ ಅದನ್ನು ಬಿಡಿಸದೆ ಹೋದರೆ ಲೇವಿಯರ ಸೊತ್ತಾದ ಅಂಥ ಪೇಟೆಮನೆ ಮಾರಾಟವಾಗಿದ್ದರೂ ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವುದು. ಏಕೆಂದರೆ ಇಸ್ರಯೇಲರ ಮಧ್ಯೆಯಿರುವ ಲೇವಿಯರ ಪೇಟೆಮನೆಗಳು ಅವರ ಶಾಶ್ವತ ಸೊತ್ತು.</verse>
				<verse number="34">ಅವರು ತಮ್ಮ ಪೇಟೆಗಳಿಗೆ ಸೇರಿರುವ ಹುಲ್ಲುಗಾವಲನ್ನು ಮಾರಲೇಕೂಡದು. ಅದು ಅವರಿಗೆ ಶಾಶ್ವತವಾದ ಸೊತ್ತು.</verse>
				<verse number="35">“ನಿಮ್ಮಲ್ಲಿ ಒಬ್ಬ ಸಹೋದರನು ಬಡತನದಿಂದ ಗತಿಹೀನನಾದರೆ ನೀವು ಅವನನ್ನು ನಿಮ್ಮ ನಡುವೆ ತಂಗಿರುವ ಆಗಂತುಕನೆಂದು ಭಾವಿಸಿ ಸಹಾಯಮಾಡಬೇಕು.</verse>
				<verse number="36">ಅವನಿಂದ ಬಡ್ಡಿಯನ್ನಾಗಲಿ, ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ನೀವು ದೇವರಲ್ಲಿ ಭಯಭಕ್ತಿಯಿಟ್ಟು, ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೋಡಿಕೊಳ್ಳಬೇಕು.</verse>
				<verse number="37">ನೀವು ಅವನಿಗೆ ಸಾಲಕೊಟ್ಟರೆ ಬಡ್ಡಿಯನ್ನು ಕೇಳಬೇಡಿ, ದವಸಧಾನ್ಯ ಕೊಟ್ಟರೆ ಲಾಭ ಕೇಳಬೇಡಿ.</verse>
				<verse number="38">ನಾನು ನಿಮ್ಮ ದೇವರಾದ ಸರ್ವೇಶ್ವರ. ನಿಮಗೆ ದೇವರಾಗಿರಲು, ನಿಮಗೆ ಕಾನಾನ್ ನಾಡನ್ನು ನೀಡಲು, ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿದವನು ನಾನೇ.</verse>
				<verse number="39">ನಿಮ್ಮಲ್ಲಿ ಒಬ್ಬ ಸಹೋದರನು ಬಡವನಾಗಿ ತನ್ನನ್ನೇ ಮಾರಿಕೊಂಡರೆ ಅವನನ್ನು ಗುಲಾಮನಂತೆ ನಡೆಸಿಕೊಳ್ಳಬಾರದು.</verse>
				<verse number="40">ಅವನು ಕಾರ್ಮಿಕನಂತೆ ಆಗಂತುಕನಂತೆ ನಿಮ್ಮ ಬಳಿಯಲ್ಲೆ ಇದ್ದು, ಜೂಬಿಲಿ ಸಂವತ್ಸರದ ತನಕ ನಿಮ್ಮ ಸೇವೆಮಾಡಲಿ.</verse>
				<verse number="41">ಆಗ ಅವನನ್ನೂ ಅವನ ಮಕ್ಕಳನ್ನೂ ಬಿಡುಗಡೆ ಮಾಡಬೇಕು; ಆಗ ಅವನು ಸ್ವಜನರ ಬಳಿಗೂ ಪಿತ್ರಾರ್ಜಿತ ಸೊತ್ತಿಗೂ ಹಿಂದಿರುಗಬಹುದು.</verse>
				<verse number="42">ಅಂಥವರು ನನಗೇ ದಾಸರು. ನಾನು ಅವರನ್ನು ಈಜಿಪ್ಟಿನಿಂದ ಬರಮಾಡಿದೆ. ಗುಲಾಮರನ್ನು ಮಾರುವಂತೆ ನೀವು ಅವರನ್ನು ವಿಕ್ರಯಿಸಬಾರದು.</verse>
				<verse number="43">ಅವರಿಂದ ಕಠಿಣವಾದ ಸೇವೆ ಮಾಡಿಸಿಕೊಳ್ಳಬಾರದು. ನಿಮ್ಮ ದೇವರಲ್ಲಿ ಭಯಭಕ್ತಿಯಿರಲಿ.</verse>
				<verse number="44">ಗುಲಾಮಗಿರಿಗಾಗಿ ನಿಮಗೆ ಸ್ತ್ರೀಪುರುಷರು ಬೇಕಾದರೆ ಸುತ್ತಮುತ್ತಲಿರುವ ಅನ್ಯರನ್ನು ಕೊಂಡುಕೊಳ್ಳಬಹುದು;</verse>
				<verse number="45">ನಿಮ್ಮ ನಡುವೆ ಇರುವ ಪರವಾಸಿಗಳನ್ನೂ ನಿಮ್ಮ ನಾಡಿನಲ್ಲೇ ಅವರಿಂದ ಹುಟ್ಟಿದವರನ್ನೂ ಕೊಂಡುಕೊಳ್ಳಬಹುದು. ಅಂಥವರು ನಿಮಗೆ ಸೊತ್ತಾಗಬಹುದು.</verse>
				<verse number="46">ಅಂಥವರನ್ನು ಸ್ವಾಧೀನಪಡಿಸಿಕೊಂಡು ನಿಮ್ಮ ತರುವಾಯ ನಿಮ್ಮ ಸಂತತಿಯವರಿಗೆ ಸೊತ್ತಾಗಿ ಕೊಟ್ಟುಬಿಡಬಹುದು. ಅವರನ್ನು ಶಾಶ್ವತ ಜೀತದಾರರನ್ನಾಗಿ ಮಾಡಿಕೊಳ್ಳಬಹುದು. ಆದರೆ ಇಸ್ರಯೇಲರಾದ ನೀವೆಲ್ಲರು ಸಹೋದರರು. ಆದುದರಿಂದ ಒಬ್ಬರಿಂದೊಬ್ಬರು ಕ್ರೂರವಾಗಿ ಸೇವೆ ಮಾಡಿಸಿಕೊಳ್ಳಬಾರದು.</verse>
				<verse number="47">ನಿಮ್ಮ ಸಹೋದರರಲ್ಲಿ ಒಬ್ಬನು ಬಡವನಾಗಿ ನಿಮ್ಮ ನಡುವೆ ಮನೆಮಾಡಿಕೊಂಡ ಧನವಂತನಾದ ಅನ್ಯದೇಶದವನಿಗಾಗಲಿ ಅವನಿಗೆ ಸೇರಿದವನಾಗಲಿ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು.</verse>
				<verse number="48">ಅವನ ಬಂಧುಗಳಲ್ಲಿ ಯಾರಾದರೂ ಈಡುಕೊಟ್ಟು ಅವನನ್ನು ಬಿಡಿಸಬಹುದು.</verse>
				<verse number="49">ಅವನ ದೊಡ್ಡಪ್ಪ ಚಿಕ್ಕಪ್ಪಂದಿರಾಗಲಿ ಇವರ ಮಕ್ಕಳಾಗಲಿ ಅಥವಾ ಸಮೀಪ ಬಂಧುಗಳಲ್ಲಿ ಯಾರೇ ಆಗಲಿ ಈಡುಕೊಟ್ಟು ಅವನನ್ನು ಬಿಡಿಸಬಹುದು. ಬೇಕಾದಷ್ಟು ಹಣವು ದೊರೆತರೆ ತನ್ನನ್ನು ತಾನೇ ಬಿಡಿಸಿಕೊಳ್ಳಬಹುದು.</verse>
				<verse number="50">ಅವನು ತನ್ನನ್ನು ಮಾರಿಕೊಂಡ ವರ್ಷ ಮೊದಲುಗೊಂಡು ಮುಂದೆ ಜೂಬಿಲಿ ಸಂವತ್ಸರದ ತನಕ ದಣಿಯ ಸಂಗಡ ವರ್ಷಗಳ ಲೆಕ್ಕವನ್ನು ಮಾಡಿ ಆ ಲೆಕ್ಕದ ಮೇರೆಗೆ ಬಿಡುಗಡೆಯ ಕ್ರಯವನ್ನು ಕೊಡಬೇಕು. ಕೂಲಿಯವನ ವಿಷಯದಲ್ಲಿ ಲೆಕ್ಕಿಸುವಂತೆ ಅವನ ವಿಷಯದಲ್ಲಿ ಲೆಕ್ಕಿಸಬೇಕು.</verse>
				<verse number="51">ಜೂಬಿಲಿ ಸಂವತ್ಸರವು ಬರುವುದಕ್ಕೆ ಇನ್ನು ಅನೇಕ ವರ್ಷಗಳಿದ್ದರೆ ಹೆಚ್ಚು ಭಾಗವನ್ನೂ</verse>
				<verse number="52">ಕೆಲವು ವರ್ಷಗಳು ಮಾತ್ರ ಉಳಿದರೆ ಸ್ವಲ್ಪ ಭಾಗವನ್ನೂ ದಣಿಗೆ ಕೊಟ್ಟು ತನ್ನನ್ನು ಬಿಡಿಸಿಕೊಳ್ಳಬೇಕು.</verse>
				<verse number="53">ಅವನು ವರುಷ ವರುಷಕ್ಕೆ ಗೊತ್ತುಮಾಡಿಕೊಂಡ ಕೂಲಿಯವನಂತೆಯೇ ದಣಿಯ ಬಳಿಯಲ್ಲಿರಬೇಕು. ಆ ದಣಿ ಅವನಿಂದ ಕಠಿಣವಾಗಿ ಸೇವೆ ಮಾಡಿಸಿಕೊಳ್ಳುವುದನ್ನು ನೀವು ನೋಡಿ ಸುಮ್ಮನೆ ಇರಬಾರದು.</verse>
				<verse number="54">ಮೇಲೆ ಹೇಳಿದ ರೀತಿಯಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ ಜೂಬಿಲಿ ಸಂವತ್ಸರದಲ್ಲಿ ಅವನೂ ಅವನ ಮಕ್ಕಳೂ ಬಿಡುಗಡೆಯಾಗಬೇಕು.</verse>
				<verse number="55">ಏಕೆಂದರೆ ಇಸ್ರಯೇಲರು ನನ್ನ ದಾಸರೇ; ನಾನು ಅವರನ್ನು ಈಜಿಪ್ಟಿನಿಂದ ಬರಮಾಡಿದೆನಲ್ಲವೇ? ನಾನು ನಿಮ್ಮ ದೇವರಾದ ಸರ್ವೇಶ್ವರ.</verse>
			</chapter>
			<chapter number="26">
				<verse number="1">“ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬೇಡಿ; ಕೆತ್ತಿದ ಪ್ರತಿಮೆಯನ್ನಾಗಲಿ, ಕಲ್ಲಿನ ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬೇಡಿ; ಆರಾಧನೆಗಾಗಿ ವಿಚಿತ್ರವಾಗಿ ಕೆತ್ತಿದ ಸ್ತಂಭಗಳನ್ನು ನಿಮ್ಮ ನಾಡಿನಲ್ಲಿ ಇಡಬೇಡಿ. ನಾನೇ ನಿಮ್ಮ ಸರ್ವೇಶ್ವರನಾದ ದೇವರು.</verse>
				<verse number="2">ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು. ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಸರ್ವೇಶ್ವರ.</verse>
				<verse number="3">“ನೀವು ನನ್ನ ನಿಯಮಗಳನ್ನು ಕೈಗೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ</verse>
				<verse number="4">ನಾನು ಮುಂಗಾರು ಹಿಂಗಾರು ಮಳೆಗಳನ್ನು ಕಾಲಕಾಲಕ್ಕೆ ಸರಿಯಾಗಿ ಬರಮಾಡುವೆನು. ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವುವು. ತೋಟದ ಮರಗಳು ಹೇರಳವಾದ ಫಲಕೊಡುವುವು.</verse>
				<verse number="5">ಕಣತುಳಿಸುವ ಕೆಲಸ ದ್ರಾಕ್ಷಿ ಬೆಳೆಯ ಪರ್ಯಂತರವೂ ದ್ರಾಕ್ಷೀ ಬೆಳೆಯನ್ನು ಕೂಡಿಸುವ ಕೆಲಸ ಬಿತ್ತನೆಯ ಕಾಲದ ಪರ್ಯಂತರವೂ ನಡೆಯುವುವು. ಸಮೃದ್ಧಿಯಾಗಿ ಊಟಮಾಡುವಿರಿ, ನಾಡಿನಲ್ಲಿ ನಿರ್ಭಯವಾಗಿ ವಾಸಮಾಡುವಿರಿ.</verse>
				<verse number="6">ನಿಮ್ಮ ನಾಡಿಗೆ ಸುಕ್ಷೇಮವನ್ನು ಅನುಗ್ರಹಿಸುವೆನು. ಯಾರ ಭಯವೂ ಇಲ್ಲದೆ ನೀವು ನಿದ್ರಿಸುವಿರಿ; ದುಷ್ಟಮೃಗಗಳ ಕಾಟ ನಿಮ್ಮ ನಾಡಿಗಿರದು; ನಿಮ್ಮ ನಾಡು ಶತ್ರುಗಳ ಕತ್ತಿಗೆ ತುತ್ತಾಗದು.</verse>
				<verse number="7">ನೀವೇ ನಿಮ್ಮ ವೈರಿಗಳನ್ನು ಓಡಿಸುವಿರಿ; ಕತ್ತಿಯಿಂದ ಸಂಹರಿಸುವಿರಿ.</verse>
				<verse number="8">ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನೂ, ನೂರು ಮಂದಿ ಹತ್ತು ಸಾವಿರ ಮಂದಿಯನ್ನೂ ಓಡಿಸುವರು. ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.</verse>
				<verse number="9">ನಾನು ನಿಮ್ಮ ಮೇಲೆ ಕರುಣೆಯಿಟ್ಟು, ಹೆಚ್ಚು ಸಂತಾನ, ಪ್ರಾಪ್ತಿಯನ್ನು ಕೊಟ್ಟು ಅಭಿವೃದ್ಧಿಗೊಳಿಸಿ, ನಿಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.</verse>
				<verse number="10">ನೀವು ಬಹು ದಿನದಿಂದ ಕೂಡಿಸಿಟ್ಟುಕೊಂಡಿರುವ ಹಳೆಯ ಧಾನ್ಯವನ್ನು ಊಟಮಾಡುವಿರಿ. ಹೊಸ ದವಸಧಾನ್ಯಗಳಿಗೆ ಕಣಜ ಸಾಲದೆ ಹಳೆಯದನ್ನು ತೆಗೆದುಬಿಡುವಿರಿ.</verse>
				<verse number="11">ನಾನು ನಿಮ್ಮ ಮಧ್ಯೆ ನಿವಾಸಿಸುವೆನು. ನಿಮ್ಮನ್ನು ಕೈಬಿಡೆನು.</verse>
				<verse number="12">ನಿಮ್ಮ ನಡುವೆ ಸಂಚರಿಸುತ್ತಾ ನಿಮಗೆ ದೇವರಾಗಿರುವೆನು. ನೀವು ನನಗೆ ಪ್ರಜೆಗಳಾಗಿರುವಿರಿ.</verse>
				<verse number="13">ನೀವು ಈಜಿಪ್ಟಿನವರಿಗೆ ಗುಲಾಮರಾಗಿರಬಾರದೆಂದು ನಿಮ್ಮನ್ನು ಅವರ ದೇಶದಿಂದ ಬರಮಾಡಿದ ನಿಮ್ಮ ದೇವರಾದ ಸರ್ವೇಶ್ವರನು ನಾನೇ. ನಿಮ್ಮ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದವನು ನಾನಲ್ಲವೆ?</verse>
				<verse number="14">“ಆದರೆ ನೀವು ನನ್ನ ಮಾತನ್ನು ಕೇಳದೆ, ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,</verse>
				<verse number="15">ನನ್ನ ನಿಯಮಗಳನ್ನು ಅಲ್ಲಗಳೆದು, ನನ್ನ ವಿಧಿಗಳನ್ನು ತಳ್ಳಿಬಿಟ್ಟು, ನನ್ನ ಆಜ್ಞೆಗಳಿಗೆ ವಿಧೇಯರಾಗದೆ ನಿಬಂಧನೆಗಳನ್ನೂ ಮೀರಿ ನಡೆದರೆ</verse>
				<verse number="16">ನೀವು ಈ ದಂಡನೆಗಳಿಗೆ ಗುರಿಯಾಗುವಿರಿ. ನಿಮಗೆ ಕ್ಷಯ ರೋಗ, ಚಳಿಜ್ವರ ಮುಂತಾದ ಭೀಕರ ವ್ಯಾಧಿಗಳು ಬರುವಂತೆ ಮಾಡುವೆನು. ಇವುಗಳ ನಿಮಿತ್ತ ನೀವು ಕಂಗೆಡುವಿರಿ, ಮನಗುಂದಿ ಹೋಗುವಿರಿ. ನಿಮ್ಮ ಬಿತ್ತನೆಯ ಫಲ ನಿಮಗೆ ಸಿಗದೆ ಹೋಗುವುದು. ಅದು ಶತ್ರುಗಳ ಪಾಲಾಗುವುದು.</verse>
				<verse number="17">ನಾನು ನಿಮ್ಮ ಮೇಲೆ ಕಡುಕೋಪಗೊಳ್ಳುವೆನು; ನೀವು ನಿಮ್ಮ ಶತ್ರುಗಳ ಮುಂದೆಯೇ ಸೋತುಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು. ಯಾರೂ ಬೆನ್ನಟ್ಟಿ ಬರದಿದ್ದರೂ ನೀವು ಹೆದರಿ ಓಡುವಿರಿ.</verse>
				<verse number="18">“ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಗೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ದಂಡಿಸುವೆನು; ನಿಮ್ಮ ಗರ್ವವನ್ನು ಅಡಗಿಸುವೆನು.</verse>
				<verse number="19">ನಿಮ್ಮ ಮೇಲಿರುವ ಆಕಾಶವನ್ನು ಕಬ್ಬಿಣವಾಗಿಸುವೆನು. ನೀವು ಸಾಗುವಳಿ ಮಾಡುವ ಭೂಮಿಯನ್ನು ತಾಮ್ರವಾಗಿಸುವೆನು.</verse>
				<verse number="20">ನೀವು ದುಡಿದದ್ದೆಲ್ಲಾ ವ್ಯರ್ಥವಾಗುವುದು. ನಿಮ್ಮ ಹೊಲಗದ್ದೆಗಳಲ್ಲಿ ಬೆಳೆಯಾಗದು; ನಿಮ್ಮ ತೋಟ ತೋಪುಗಳ ಮರಗಳು ಫಲಿಸವು.</verse>
				<verse number="21">“ನೀವು ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ ನಿಮ್ಮ ಪಾಪದ ನಿಮಿತ್ತ ಇನ್ನೂ ಏಳುಪಟ್ಟು ಹೆಚ್ಚಾಗಿ ಬಾಧಿಸುವೆನು.</verse>
				<verse number="22">ನಿಮ್ಮ ಮೇಲೆ ಕ್ರೂರಪ್ರಾಣಿಗಳನ್ನು ಬರಮಾಡುವೆನು. ಅವು ನಿಮ್ಮ ಮಕ್ಕಳನ್ನು ಕೊಂದುಹಾಕುವುವು; ನಿಮ್ಮ ಪಶುಪ್ರಾಣಿಗಳನ್ನು ನಾಶಮಾಡುವುವು; ನಿಮ್ಮನ್ನು ಅಲ್ಪಸಂಖ್ಯಾತರನ್ನಾಗಿ ಮಾಡುವುವು, ನಿಮ್ಮ ದಾರಿಗಳು ಪಾಳುಬೀಳುವುವು.</verse>
				<verse number="23">“ಇಷ್ಟು ಶಿಕ್ಷೆಗಳಿಂದಲೂ ನೀವು ನನ್ನ ಆಜ್ಞೆಗೆ ತಲೆಬಾಗದೆ ನನಗೆ ವಿರೋಧವಾಗಿ ನಡೆದರೆ</verse>
				<verse number="24">ನಾನೇ ನಿಮಗೆ ವಿರೋಧವಾಗಿ ನಡೆಯುವೆನು. ನಿಮ್ಮ ಪಾಪಗಳ ಕಾರಣ ನಾನೇ ನಿಮ್ಮನ್ನು ಏಳರಷ್ಟು ದಂಡಿಸುವೆನು.</verse>
				<verse number="25">ಶತ್ರುಗಳ ಕತ್ತಿಯ ಮೂಲಕ ನಿಮ್ಮನ್ನು ಸಂಹರಿಸುವೆನು.ನೀವು ನನ್ನ ನಿಬಂಧನವನ್ನು ಮೀರಿದುದರಿಂದ ಆ ಕತ್ತಿ ಪ್ರತಿದಂಡನೆ ಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ಅಂಟುರೋಗವುಂಟಾಗುವಂತೆ ಮಾಡುವೆನು. ಹೀಗೆ ನೀವು ಶತ್ರುಗಳಿಗೆ ಶರಣಾಗುವಿರಿ.</verse>
				<verse number="26">ನಿಮ್ಮ ನಿಮ್ಮ ಜೀವನಾಧಾರವನ್ನು ನಾನು ತೆಗೆದುಬಿಟ್ಟಾಗ ಹತ್ತು ಮಂದಿ ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿ ಸುಟ್ಟು, ಅದನ್ನು ಪಡಿ ಪ್ರಕಾರ ಹಂಚಿಕೊಡುವರು. ನೀವು ಅದನ್ನು ತಿಂದರೂ ತೃಪ್ತಿಯಾಗದು.</verse>
				<verse number="27">“ಇದನ್ನೆಲ್ಲಾ ನೀವು ಅನುಭವಿಸಿದ ಮೇಲೂ ನನ್ನ ಮಾತಿಗೆ ಕಿವಿಗೊಡದೆ ನನಗೆ ವಿರೋಧವಾಗಿ ನಡೆದರೆ,</verse>
				<verse number="28">ನಾನು ನಿಮಗೆ ವಿರುದ್ಧ ಕೋಪದಿಂದ ವರ್ತಿಸುವೆನು. ನಿಮ್ಮ ಪಾಪಗಳ ಕಾರಣ ಏಳ್ಮಡಿಯಾಗಿ ಶಿಕ್ಷಿಸುವೆನು.</verse>
				<verse number="29">ನೀವು ನಿಮ್ಮ ಗಂಡುಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.</verse>
				<verse number="30">ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು. ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು. ನಿಮ್ಮ ಬೊಂಬೆಗಳ ಬುರುಡೆಗಳ ಮೇಲೆ ನಿಮ್ಮ ಬುರುಡೆಗಳನ್ನು ಬಿಸಾಡುವೆನು; ನಿಮ್ಮ ಬಗ್ಗೆ ಅಸಹ್ಯಪಡುವೆನು.</verse>
				<verse number="31">ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು; ನಿಮ್ಮ ದೇವಸ್ಥಾನಗಳನ್ನು ನೆಲಸಮ ಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಸುವಾಸನೆಯನ್ನು ನಾನು ಮೂಸಿಯೂ ನೋಡುವುದಿಲ್ಲ.</verse>
				<verse number="32">ನಾನು ನಿಮ್ಮ ನಾಡನ್ನು ಸಂಪೂರ್ಣವಾಗಿ ಹಾಳುಮಾಡಿದಾಗ ಅದರಲ್ಲಿ ನೆಲಸುವ ಶತ್ರುಗಳು ಅದನ್ನು ನೋಡಿ ಚಕಿತರಾಗುವರು.</verse>
				<verse number="33">ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.</verse>
				<verse number="34">ನೀವು ನಿಮ್ಮ ಶತ್ರುಗಳ ದೇಶದಲ್ಲಿ ಸೆರೆಸೇರಿಸುವಾಗಲೆಲ್ಲಾ ನಿಮ್ಮ ನಾಡು ಹಾಳುಬಿದ್ದು, ತನಗೆ ಸಲ್ಲಬೇಕಾದ ಸಬ್ಬತ್ ಕಾಲವನ್ನು ಅನುಭವಿಸುವುದು. ಅದು ವಿಶ್ರಾಂತಿಯನ್ನು ಹೊಂದಿ ಸಬ್ಬತ್ ಕಾಲವನ್ನು ಸವಿಯುವುದು.</verse>
				<verse number="35">ನೀವು ಅದರಲ್ಲಿ ವಾಸವಾಗಿದ್ದಾಗ ಅದಕ್ಕೆ ದೊರಕದ ಸಕಾಲದ ವಿಶ್ರಾಂತಿಯನ್ನು ಅದು ಹಾಳುಬಿದ್ದಿರುವ ದಿನಗಳಲ್ಲಿ ಸುದೀರ್ಘವಾಗಿ ಅನುಭವಿಸುವುದು.</verse>
				<verse number="36">“ನಿಮ್ಮಲ್ಲಿ ಯಾರ್ಯಾರು ಶತ್ರುದೇಶಗಳಲ್ಲಿ ಅಳಿದುಳಿದಿರುವಿರೋ ಅವರ ಅಂತರಾಳದಲ್ಲಿ ಭಯಭೀತಿಯನ್ನು ಹುಟ್ಟಿಸುವೆನು. ಗಾಳಿಗೆ ತೂರಾಡುವ ತರಗೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು.ಆ ಸಪ್ಪಳ ಕೇಳಿ, ಖಡ್ಗಕ್ಕೆ ಹೆದರಿ ಓಡಿಹೋಗುವವರಂತೆ ಫೇರಿಕೀಳುವರು. ಯಾರೂ ಬೆನ್ನಟ್ಟಿಬಾರದಿದ್ದರೂ ಅವರು ಎದ್ದುಬಿದ್ದು ಓಡುವರು.</verse>
				<verse number="37">ಯಾರೂ ಓಡಿಸದಿದ್ದರೂ ಕತ್ತಿಗೆ ಹೆದರಿ ಓಡುವವರಂತೆ ಒಬ್ಬರ ಮೇಲೊಬ್ಬರು ಬೀಳುವರು. ಶತ್ರುಗಳ ಮುಂದೆ ನಿಲ್ಲಲಾರಿರಿ.</verse>
				<verse number="38">ಅನ್ಯಜನಗಳಲ್ಲಿ ಚದರಿಹೋಗಿ ಕಣ್ಮರೆಯಾಗುವಿರಿ. ಶತ್ರುಗಳ ದೇಶ ನಿಮ್ಮನ್ನು ಕಬಳಿಸಿಬಿಡುವುದು.</verse>
				<verse number="39">ನಿಮ್ಮಲ್ಲಿ ಅಳಿದುಳಿದವರು ತಮ್ಮ ಪಾಪದ ಪ್ರಯುಕ್ತ ಹಾಗು ತಮ್ಮ ಪಿತೃಗಳ ಪಾಪದ ಪ್ರಯುಕ್ತ ಅವರಂತೆಯೇ ಶತ್ರುಗಳ ನಾಡುಗಳಲ್ಲಿ ಕ್ಷೀಣವಾಗಿ ಹೋಗುವರು.</verse>
				<verse number="40">“ಆದರೆ ಅವರು ತಾವೂ ತಮ್ಮ ಪಿತೃಗಳೂ ನನಗೆ ದ್ರೋಹಿಗಳಾಗಿ ಪಾಪ ಮಾಡಿದವರೆಂದು ಒಪ್ಪಿಕೊಂಡು, ನನಗೆ ವಿರೋಧವಾಗಿ ನಡೆದದ್ದರಿಂದಲೇ</verse>
				<verse number="41">ನಾನು ಅವರಿಗೆ ವಿರುದ್ಧವಾಗಿ ವರ್ತಿಸಿ ಶತ್ರುದೇಶದಲ್ಲಿ ಸೆರೆ ಸೇರಿಸಬೇಕಾಯಿತೆಂದು ಅರಿತುಕೊಂಡು, ತಮ್ಮ ಮೊಂಡುತನವನ್ನು ಬಿಟ್ಟು, ನನ್ನ ಆಜ್ಞೆಗೆ ತಲೆಬಾಗಿ, ತಮ್ಮ ಪಾಪ ಪರಿಣಾಮದ ಶಿಕ್ಷೆಯನ್ನು ಸ್ವೀಕರಿಸಿದ್ದೇ ಆದರೆ,</verse>
				<verse number="42">ಯಕೋಬ್, ಇಸಾಕ್ ಹಾಗು ಅಬ್ರಹಾಮ್ ಇವರಿಗೆ ಮಾಡಿದ ವಾಗ್ದಾನಗಳನ್ನು ನೆನಪಿಗೆ ತಂದುಕೊಳ್ಳುವೆನು. ಅವುಗಳನ್ನು ನೆರವೇರಿಸುವೆನು. ಅವರ ಸ್ವಂತ ನಾಡನ್ನು ಕರುಣೆಯಿಂದ ಜ್ಞಾಪಿಸಿಕೊಳ್ಳುವೆನು.</verse>
				<verse number="43">ಆದರೆ ಅವರು ಬಿಟ್ಟುಹೋದ ಸ್ವಂತ ನಾಡು ಮೊಟ್ಟಮೊದಲು ನಿರ್ಜನವಾಗಬೇಕು; ಅದು ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಅನುಭವಿಸಬೇಕು; ಅವರು ಸರ್ವೇಶ್ವರನ ಆಜ್ಞೆ ಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣ ತಮ್ಮ ಪಾಪದ ಫಲವನ್ನು ಸವಿಯಬೇಕು.</verse>
				<verse number="44">ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವುದಿಲ್ಲ. ತಾತ್ಸಾರ ಮಾಡುವುದಿಲ್ಲ, ನಾನು ಅವರಿಗೆ ಮಾಡಿದ ವಾಗ್ದಾನವನ್ನು ಮೀರುವುದಿಲ್ಲ. ನಾನು ಅವರ ದೇವರಾದ ಸರ್ವೇಶ್ವರನಲ್ಲವೆ?</verse>
				<verse number="45">ಅವರ ಪೂರ್ವಜರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನೇ ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದೇ ಅವರ ಪೂರ್ವಜರನ್ನು ಎಲ್ಲ ಜನಾಂಗಗಳ ಕಣ್ಮುಂದೆಯೇ ಈಜಿಪ್ಟಿನಿಂದ ಬರಮಾಡಿದೆನು. ನಾನು ಸರ್ವೇಶ್ವರ.”</verse>
				<verse number="46">ಸರ್ವೇಶ್ವರ ಸ್ವಾಮಿ ಸೀನಾಯಿ ಬೆಟ್ಟದಲ್ಲಿ ಮೋಶೆಯ ಮುಖಾಂತರ ಇಸ್ರಯೇಲರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೊಟ್ಟ ಆಜ್ಞಾವಿಧಿಗಳು ಇವುಗಳೇ.</verse>
			</chapter>
			<chapter number="27">
				<verse number="1">ಇಸ್ರಯೇಲರಿಗೆ ಈ ಕೆಳಕಂಡಂತೆ ಆಜ್ಞಾಪಿಸಬೇಕೆಂದು ಸರ್ವೇಶ್ವರ ಸ್ವಾಮಿ ಮೋಶೆಗೆ ತಿಳಿಸಿದರು.</verse>
				<verse number="2">“ಯಾರಾದರು ನರಮಾನವರ ಪ್ರಾಣವನ್ನು ಸರ್ವೇಶ್ವರನಿಗೆ ಹರಕೆಮಾಡಿ ಪ್ರತಿಷ್ಠಿಸಿದರೆ, ಅವುಗಳನ್ನು ಬಿಡಿಸುವುದಕ್ಕೆ ದೇವರ ಸೇವೆಗೆ ನೇಮಕವಾದ ಬೆಳ್ಳಿನಾಣ್ಯದ ಮೇರೆಗೆ ನೀವು ಅವರಿಂದ ಕೊಡಿಸಬೇಕಾದ ಈಡಿನ ವಿವರ ಹೀಗಿದೆ.</verse>
				<verse number="3">ಇಪ್ಪತ್ತರಿಂದ ಅರವತ್ತು ವರ್ಷ ವಯಸ್ಸುಳ್ಳ ಪುರುಷನ ಪರವಾಗಿ ಐವತ್ತು ಬೆಳ್ಳಿನಾಣ್ಯಗಳನ್ನು ಹಾಗು</verse>
				<verse number="4">ಸ್ತ್ರೀಯ ಪರವಾಗಿ ಮೂವತ್ತು ಬೆಳ್ಳಿನಾಣ್ಯಗಳನ್ನು ಕೊಡಿಸಬೇಕು.</verse>
				<verse number="5">ಐದರಿಂದ ಇಪ್ಪತ್ತು ವರ್ಷ ವಯಸ್ಸುಳ್ಳ ಪುರುಷನ ಪರವಾಗಿ ಇಪ್ಪತ್ತು ಬೆಳ್ಳಿನಾಣ್ಯಗಳನ್ನು ಹಾಗು ಸ್ತ್ರೀಯ ಪರವಾಗಿ ಹತ್ತು ಬೆಳ್ಳಿನಾಣ್ಯಗಳನ್ನು ಕೊಡಿಸಬೇಕು.</verse>
				<verse number="6">ಒಂದು ತಿಂಗಳ ವಯಸ್ಸಿನಿಂದ ಐದು ವರ್ಷ ವಯಸ್ಸಿನ ಹುಡುಗನ ಪರವಾಗಿ ಐದು ಬೆಳ್ಳಿನಾಣ್ಯಗಳನ್ನೂ ಹುಡುಗಿಯ ಪರವಾಗಿ ಮೂರು ಬೆಳ್ಳಿನಾಣ್ಯಗಳನ್ನೂ ಕೊಡಿಸಬೇಕು.</verse>
				<verse number="7">ಅರವತ್ತು ವರ್ಷ ವಯಸ್ಸು ದಾಟಿದ ಪುರುಷನ ಪರವಾಗಿ ಹದಿನೈದು ಬೆಳ್ಳಿನಾಣ್ಯಗಳನ್ನು ಸ್ತ್ರೀಯ ಪರವಾಗಿ ಹತ್ತು ಬೆಳ್ಳಿನಾಣ್ಯಗಳನ್ನು ಕೊಡಿಸಬೇಕು.</verse>
				<verse number="8">ಯಾವನಾದರು ಬಡವನಾಗಿದ್ದು ನೇಮಕವಾದ ನಾಣ್ಯವನ್ನು ಕೊಡಲಾಗದೆ ಹೋದರೆ ಅವನು ಹರಕೆ ಮಾಡಿ ಪ್ರತಿಷ್ಠಿಸಿದ ವ್ಯಕ್ತಿಯನ್ನು ಯಾಜಕನ ಮುಂದೆ ನಿಲ್ಲಿಸಬೇಕು. ಯಾಜಕನು ಹರಕೆ ಮಾಡಿದವನ ಸ್ಥಿತಿಗತಿಗೆ ತಕ್ಕಂತೆ ಅವನು ತೆರಬೇಕಾದ ನಾಣ್ಯ ಇಷ್ಟೆಂದು ನಿಗದಿ ಮಾಡಬೇಕು.</verse>
				<verse number="9">“ಸರ್ವೇಶ್ವರನಿಗೆ ಸಮರ್ಪಿಸಬಹುದಾದ ಪ್ರಾಣಿಯನ್ನು ಯಾವನಾದರೂ ಹರಕೆಮಾಡಿ ಪ್ರತಿಷ್ಠಿಸಿದ್ದರೆ ಅದು ದೇವರ ಸೊತ್ತಾಗಿರಬೇಕು.</verse>
				<verse number="10">ಅದನ್ನು ಬದಲಾಯಿಸಕೂಡದು. ಕೆಟ್ಟದ್ದಕ್ಕೆ ಬದಲಾಗಿ ಒಳ್ಳೆಯದನ್ನು, ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನು ಹಾಗು ಒಂದಕ್ಕೆ ಬದಲಾಗಿ ಮತ್ತೊಂದನ್ನು ಕೊಡಕೂಡದು. ಅವನು ಗೊತ್ತುಮಾಡಿದ ಪ್ರಾಣಿಗೆ ಬದಲಾಗಿ ಬೇರೊಂದು ಪ್ರಾಣಿಯನ್ನು ಪ್ರತ್ಯೇಕಿಸಿಟ್ಟಿದ್ದರೆ ಮೊದಲನೆಯ ಪ್ರಾಣಿ ಹಾಗು ಅದಕ್ಕೆ ಬದಲಾಗಿ ಇಟ್ಟ ಪ್ರಾಣಿ ಎರಡೂ ಸರ್ವೇಶ್ವರನಿಗೆ ಸೇರಬೇಕು.</verse>
				<verse number="11">ಸರ್ವೇಶ್ವರನಿಗೆ ಸಮರ್ಪಿಸಕೂಡದ ಬೇರೆ ಜಾತಿಯ ಪ್ರಾಣಿಯನ್ನು ಪ್ರತಿಷ್ಠಿಸಿದ್ದರೆ ಅದನ್ನು ಯಾಜಕನ ಮುಂದೆ ನಿಲ್ಲಿಸಬೇಕು.</verse>
				<verse number="12">ಅದು ಒಳ್ಳೆಯದೊ ಕೆಟ್ಟದ್ದೋ ಎಂದು ಯಾಜಕನು ನೋಡಿ ಅದರ ಬೆಲೆ ಇಷ್ಟೆಂದು ನಿರ್ಧರಿಸಬೇಕು. ಯಾಜಕನು ನಿರ್ಧರಿಸಿದ ಬೆಲೆಯೇ ಅಂತಿಮವಾದುದು.</verse>
				<verse number="13">ಹರಕೆ ಮಾಡುವವನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.</verse>
				<verse number="14">“ಯಾವನಾದರು ತನ್ನ ಮನೆಯನ್ನು ಸರ್ವೇಶ್ವರನಿಗೆ ಮೀಸಲಾಗಿ ಪ್ರಟಿಷ್ಠಿಸಿದ್ದರೆ ಯಾಜಕನು ಅದು ಉತ್ತಮವಾದ ಮನೆಯೋ ಅಲ್ಲವೋ ಎಂದು ಪರೀಕ್ಷಿಸಿ ಬೆಲೆಯನ್ನು ಗೊತ್ತುಮಾಡಬೇಕು; ಯಾಜಕನು ಗೊತ್ತುಮಾಡಿದ ಬೆಲೆಯನ್ನು ಬದಲಾಯಿಸುವಂತಿಲ್ಲ.</verse>
				<verse number="15">ಹರಕೆಮಾಡಿದವನು ಆ ಮನೆಯನ್ನು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಕ್ರಯದ ಜೊತೆಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು. ಆಗ ಆ ಮನೆ ಅವನದಾಗುವುದು.</verse>
				<verse number="16">“ಯಾವನಾದರು ಪಿತ್ರಾರ್ಜಿತ ಭೂಮಿಯಲ್ಲಿ ಒಂದು ಭಾಗವನ್ನು ಸರ್ವೇಶ್ವರನಿಗೆ ಹರಕೆಮಾಡಿ ಪ್ರತಿಷ್ಠಿಸಿದ್ದರೆ ಅದಕ್ಕೆ ಬಿತ್ತನೆಬೀಜ ಎಷ್ಟು ಬೇಕಾಗುತ್ತದೆ ಎಂಬುದರ ಆಧಾರದ ಮೇಲೆ ನೀವು ಅದರ ಬೆಲೆಯನ್ನು ನಿರ್ಣಯಿಸಬೇಕು. ಇಪ್ಪತ್ತು ಕಿಲೋಗ್ರಾಂ ಜವೆಗೋಧಿಯನ್ನು ಬಿತ್ತಬಹುದಾದಂಥ ಭೂಮಿಗೆ ಐವತ್ತು ಬೆಳ್ಳಿನಾಣ್ಯಗಳನ್ನು ಕೊಡಬೇಕಾಗುವುದು.</verse>
				<verse number="17">ಅವನು ಜೂಬಿಲಿ ಸಂವತ್ಸರದಿಂದ ಆ ಹೊಲವನ್ನು ಪ್ರತಿಷ್ಠಿಸಿದ್ದರೆ ಈ ಕ್ರಯ ಅಂತಿಮವಾಗಿರುವುದು.</verse>
				<verse number="18">ಜೂಬಿಲಿ ಸಂವತ್ಸರದ ತರುವಾಯ ಭೂಮಿಯನ್ನು ಹರಕೆ ಮಾಡಿದರೆ, ಮುಂದಿನ ಜೂಬಿಲಿ ಸಂವತ್ಸರಕ್ಕೆ ಕಳೆಯಬೇಕಾದ ವರ್ಷಗಳ ಸಂಖ್ಯೆಯ ಮೇರೆಗೆ ಅದರ ಬೆಲೆಯನ್ನು ಕಮ್ಮಿಮಾಡಬೇಕು.</verse>
				<verse number="19">ಹರಕೆಮಾಡಿದವನು ಅದನ್ನು ಬಿಡಿಸಿಕೊಳ್ಳಲಾಶಿಸಿದರೆ, ಅದರ ಕ್ರಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು. ಆಗ ಆ ಹೊಲ ಅವನದಾಗುವುದು.</verse>
				<verse number="20">ತಾನು ಅದನ್ನು ಬಿಡಿಸಿಕೊಳ್ಳದೆ ಮತ್ತೊಬ್ಬನಿಗೆ ಮಾರಿದರೆ ಮುಂದೆ ಅದನ್ನು ಬಿಡಿಸಿಕೊಳ್ಳುವ ಹಕ್ಕು ಇರುವುದಿಲ್ಲ.</verse>
				<verse number="21">ಬಿಡುಗಡೆಯಾಗುವ ಜೂಬಿಲಿ ಸಂವತ್ಸರದಲ್ಲಿ ಆ ಹೊಲ ಸರ್ವೇಶ್ವರನ ಸ್ವಕೀಯ ಹೊಲವಾದಂತೆ ಅವರ ಸೊತ್ತಾಗಿಯೇ ಇರಬೇಕು. ಅದು ಯಾಜಕರ ವಶದಲ್ಲಿ ಇರಬೇಕು.</verse>
				<verse number="22">“ಯಾವನಾದರು ಕ್ರಯಕ್ಕೆ ತೆಗೆದುಕೊಂಡ ಹೊಲವನ್ನು, ಅಂದರೆ ಪಿತ್ರಾರ್ಜಿತ ಭೂಮಿಗೆ ಸೇರದಿರುವ ಹೊಲವನ್ನು ಹರಕೆಮಾಡಿ ಪ್ರತಿಷ್ಠಿಸಿದರೆ</verse>
				<verse number="23">ಯಾಜಕನ ಮುಂದಿನ ಜೂಬಿಲಿ ಸಂವತ್ಸರದ ತನಕ ಇರುವ ವರ್ಷಗಳಿಗೆ ತಕ್ಕಂತೆ ಅದರ ಬೆಲೆಯನ್ನು ನಿರ್ಣಯಿಸಬೇಕು. ಪ್ರತಿಷ್ಠಿಸಿದವನು ನಿರ್ಣಯಿಸಲಾದ ಹಣವನ್ನು ಸರ್ವೇಶ್ವರನಿಗೆ ಮೀಸಲಾದುದೆಂದು ಭಾವಿಸಿ ಅದೇ ದಿನದಲ್ಲಿ ಕೊಟ್ಟುಬಿಡಬೇಕು.</verse>
				<verse number="24">ಜೂಬಿಲಿ ಸಂವತ್ಸರದಲ್ಲಿ ಆ ಹೊಲವು ಮಾರಿದವನಿಗೆ, ಅಂದರೆ ಯಾರ ಪಿತ್ರಾರ್ಜಿತ ಭೂಮಿಗೆ ಸೇರಿದೆಯೋ ಅವರಿಗೆ ಅದನ್ನು ಮರಳಿಸಬೇಕು.</verse>
				<verse number="25">ದೇವರ ಸೇವೆಯಲ್ಲಿ ಬಳಕೆಯಲ್ಲಿರುವ ‘ಶೆಕೆಲ್’ ಒಂದಕ್ಕೆ ಇಪ್ಪತ್ತು ‘ಗೇರಾ’ ತೂಕದ ನಾಣ್ಯದ ಮೇರೆಗೆ ಬೆಲೆಯನ್ನು ನಿಗದಿಮಾಡಬೇಕು.</verse>
				<verse number="26">“ಶುದ್ಧಪ್ರಾಣಿಯಲ್ಲಿ ಚೊಚ್ಚಲಾಗಿ ಹುಟ್ಟಿದ್ದು ಸರ್ವೇಶ್ವರನಿಗೆ ಸೇರಿದ್ದು. ಆದ್ದರಿಂದ ಅದನ್ನು ಯಾರೂ ಹರಕೆಯಾಗಿ ಕೊಡಕೂಡದು. ಚೊಚ್ಚಲು ಮರಿ ಹೋರಿಯೇ ಆಗಿರಲಿ, ಆಡುಕುರಿಯೇ ಆಗಿರಲಿ. ಅದು ಸರ್ವೇಶ್ವರನ ಸೊತ್ತು.</verse>
				<verse number="27">ಅಶುದ್ಧಪ್ರಾಣಿಯಲ್ಲಿ ಹುಟ್ಟಿದ ಚೊಚ್ಚಲು ಮರಿಯನ್ನು ಹರಕೆಮಾಡಿದ್ದರೆ, ಹರಕೆಮಾಡಿದವನು ನಿಗದಿಯಾದ ಬೆಲೆಯೊಂದಿಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಟ್ಟು ಅದನ್ನು ಬಿಡಿಸಿಕೊಳ್ಳಬಹುದು. ಅವನು ಬಿಡಿಸದೆಹೋದರೆ ಅದನ್ನು ನಿಗದಿಯಾದ ಕ್ರಯಕ್ಕೆ ಮಾರಬೇಕು.</verse>
				<verse number="28">“ಯಾರಾದರು ನರಮಾನವನನ್ನಾಗಲಿ, ಪಶುಪ್ರಾಣಿಯನ್ನಾಗಲಿ, ಪಿತ್ರಾರ್ಜಿತ ಭೂಮಿಯನ್ನಾಗಲಿ, ಬೇರೆ ಯಾವುದನ್ನೇ ಆಗಲಿ ಯಾವ ಶರತ್ತೂ ಇಲ್ಲದೆ ಸಂಪೂರ್ಣವಾಗಿ ಸರ್ವೇಶ್ವರನದಾಗಿರಲು ಹರಕೆ ಮಾಡಿಕೊಟ್ಟರೆ ಅದನ್ನು ಮಾರಲೂಕೂಡದು, ಬಿಡಿಸಿಕೊಳ್ಳಲೂಬಾರದು. ಸಂಪೂರ್ಣ ಸರ್ವೇಶ್ವರನದಾಗಿರಲು ಸಮರ್ಪಿಸುವಂಥದೆಲ್ಲಾ ಸರ್ವೇಶ್ವರನಿಗೆ ಮೀಸಲಾಗಿಯೇ ಇರಬೇಕು.</verse>
				<verse number="29">ಸಂಪೂರ್ಣ ಸರ್ವೇಶ್ವರನ ಸೊತ್ತಾಗುವುದಕ್ಕೆ ಒಪ್ಪಿಸಲಾದದ್ದು ನರಜಾತಿಯದಾದರೆ ಬಿಡಿಸುವುದಕ್ಕಾಗದು; ಅವನಿಗೆ ಮರಣವೇ ಆಗಬೇಕು.</verse>
				<verse number="30">“ಹೊಲದ ದವಸಧಾನ್ಯವಾಗಲಿ, ತೋಟದ ಹಣ್ಣುಹಂಪಲು ಆಗಲಿ, ಭೂಮಿಯಿಂದುಂಟಾದ ಎಲ್ಲ ಆದಾಯದಲ್ಲಿ ಹತ್ತನೆಯ ಒಂದು ಪಾಲು ಸರ್ವೇಶ್ವರನದಾಗಿರಬೇಕು. ಅದು ಸರ್ವೇಶ್ವರನಿಗೆ ಮೀಸಲಾದದ್ದು.</verse>
				<verse number="31">ಯಾವನಾದರು ತಾನು ಕೊಡಬೇಕಾದ ಹತ್ತನೆಯ ಪಾಲಿನಲ್ಲಿ ಏನಾದರು ಬಿಡಿಸಿಕೊಳ್ಳಬೇಕೆಂದಿದ್ದರೆ ಅದರ ಮೌಲ್ಯದೊಡನೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಕೊಡಬೇಕು.</verse>
				<verse number="32">ದನಕರುಗಳೇ ಆಗಲಿ, ಆಡುಕುರಿಗಳೇ ಆಗಲಿ, ಒಡೆಯನು ಲೆಕ್ಕಿಸಿದ ಎಲ್ಲ ಪಶುಪ್ರಾಣಿಗಳಲ್ಲಿ ಪ್ರತಿ ಹತ್ತನೆಯದು ಸರ್ವೇಶ್ವರನಿಗೆ ಮೀಸಲಾಗಿರಬೇಕು.</verse>
				<verse number="33">ಆ ಪಶುಪ್ರಾಣಿ ಒಳ್ಳೆಯದೋ ಕೆಟ್ಟದ್ದೋ ಎಂದು ನೋಡಬಾರದು. ಅದನ್ನು ಬದಲಾಯಿಸಬಾರದು. ಕೊಡಬೇಕಾದವನು ಅದನ್ನು ಬದಲಾಯಿಸಿದ್ದಾದರೆ ಅವನು ಮೊದಲು ಲೆಕ್ಕಿಸಿದ್ದು ಹಾಗು ಅದಕ್ಕೆ ಬದಲಾಗಿ ಇಟ್ಟಿದ್ದು ಎರಡು ಸರ್ವೇಶ್ವರನದಾಗಿರಬೇಕು. ಅದನ್ನು ಬಿಡಿಸಿಕೊಳ್ಳುವ ಹಕ್ಕು ಇರುವುದಿಲ್ಲ.“</verse>
				<verse number="34">ಇವೇ ಸರ್ವೇಶ್ವರನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಆಜ್ಞೆಗಳು.</verse>
			</chapter>
		</book>
		<book number="4">
			<chapter number="1">
				<verse number="1">ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟು ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳ ಮೊದಲನೆಯ ದಿನ ಸರ್ವೇಶ್ವರ ಸ್ವಾಮಿ ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದಿಂದ ಮೋಶೆಗೆ ಹೀಗೆಂದು ಆಜ್ಞಾಪಿಸಿದರು:</verse>
				<verse number="2">“ನೀನು ಮತ್ತು ಆರೋನ ಇಸ್ರಯೇಲ್ ಜನಸಮೂಹದ ಗಂಡಸರನ್ನು ಗೋತ್ರ ಹಾಗೂ ಕುಟುಂಬಗಳಿಗೆ ಅನುಗುಣವಾಗಿ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಎಣಿಸಬೇಕು.</verse>
				<verse number="3">ಇಸ್ರಯೇಲರಲ್ಲಿ ಸೈನಿಕ ಸೇವೆ ಸಲ್ಲಿಸತಕ್ಕವರನ್ನು, ಅಂದರೆ ಇಪ್ಪತ್ತು ವರ್ಷ ಮೇಲ್ಪಟ್ಟ ವಯಸ್ಸುಳ್ಳ ಎಲ್ಲರನ್ನು ಸೈನ್ಯ ಸೈನ್ಯವಾಗಿ ಪಟ್ಟಿಮಾಡಬೇಕು.</verse>
				<verse number="4">ಈ ಕೆಲಸಕ್ಕಾಗಿ ಒಂದೊಂದು ಕುಲದಿಂದ ಆಯಾ ಕುಲದ ಮುಖ್ಯಸ್ಥನನ್ನು ಸಹಾಯಕನನ್ನಾಗಿ ತೆಗೆದುಕೊಳ್ಳಿ;</verse>
				<verse number="5">ನಿಮಗೆ ಸಹಾಯಕರಾಗಿರಬೇಕಾದವರ ಹೆಸರುಗಳು ಇವು: ರೂಬೇನ್ ಕುಲದಿಂದ ಶೆದೇಯೂರನ ಮಗ ಎಲೀಚೂರ್.</verse>
				<verse number="6">ಸಿಮೆಯೋನ್ ಕುಲದಿಂದ ಚೂರಿಷದ್ದೈಯನ ಮಗ ಶೆಲುಮೀಯೇಲ್</verse>
				<verse number="7">ಯೆಹೂದ ಕುಲದಿಂದ ಅಮ್ಮೀನಾದಾಬನ ಮಗ ನಹಶೋನ್</verse>
				<verse number="8">ಇಸ್ಸಾಕಾರ್ ಕುಲದಿಂದ ಚೂವಾರನ ಮಗ ನೆತನೇಲ್</verse>
				<verse number="9">ಜೆಬುಲೊನ್ ಕುಲದಿಂದ ಹೇಲೋನನ ಮಗ ಎಲೀಯಾಬ್</verse>
				<verse number="10">ಜೀಸೆಫನ ವಂಶದವರಲ್ಲಿ - ಎಫ್ರಾಯಿಮ್ ಕುಲದಿಂದ ಅಮ್ಮೀಹೂದನ ಮಗ ಎಲೀಷಾಮಾ ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಲೀಯೇಲ್</verse>
				<verse number="11">ಬೆನ್ಯಾಮೀನ್ ಕುಲದಿಂದ ಗಿದ್ಯೋನಿಯ ಮಗ ಅಬೀದಾನ್</verse>
				<verse number="12">ದಾನ್ ಕುಲದಿಂದ ಅಮ್ಮೀಷದ್ದೈಯನ ಮಗ ಅಹೀಗೆಜೆರ್</verse>
				<verse number="13">ಆಶೇರ್ ಕುಲದಿಂದ ಒಕ್ರಾನನ ಮಗ ಪಗೀಯೇಲ್</verse>
				<verse number="14">ಗಾದ್ ಕುಲದಿಂದ ರೆಗೂವೇಲನ ಮಗ ಎಲ್ಯಾಸಾಫ್</verse>
				<verse number="15">ನಫ್ತಾಲಿ ಕುಲದಿಂದ ಏನಾನನ ಮಗ ಅಹೀರ.</verse>
				<verse number="16">ಇವರು ಸಮಾಜದಲ್ಲಿ ಹೆಸರು ಪಡೆದವರು. ತಮ್ಮ ತಮ್ಮ ಕುಲಗಳಲ್ಲಿ ಪ್ರಧಾನ ಪುರುಷರು, ಇಸ್ರಯೇಲರಲ್ಲಿ ಸಹಸ್ರಾಧಿಪತಿಗಳು.</verse>
				<verse number="17">ಹೀಗೆ ಹೆಸರಿನಿಂದ ಸೂಚಿತರಾದ ವ್ಯಕ್ತಿಗಳನ್ನು ಮೋಶೆ ಮತ್ತು ಆರೋನರು ಕರೆದರು.</verse>
				<verse number="18">ಎರಡನೆಯ ತಿಂಗಳಿನ ಮೊದಲನೆ ದಿನ ಜನಸಮೂಹವನ್ನು ಕೂಡಿಸಿದರು. ಇಪ್ಪತ್ತು ವರ್ಷ ಮೇಲ್ಪಟ್ಟ ವಯಸ್ಸಿನವರೆಲ್ಲರೂ ಒಬ್ಬೊಬ್ಬರಾಗಿ ಗೋತ್ರ, ಕುಟುಂಬಗಳ ಪ್ರಕಾರ ತಮ್ಮ ತಮ್ಮ ವಂಶಾವಳಿಯನ್ನು ತಿಳಿಸಿ ಹೆಸರುಗಳನ್ನು ನೊಂದಾಯಿಸಿಕೊಂಡರು.</verse>
				<verse number="19">ಸರ್ವೇಶ್ವರ ಆಜ್ಞಾಪಿಸಿದಂತೆ ಮೋಶೆ ಸೀನಾಯಿ ಮರುಭೂಮಿಯಲ್ಲಿ ಜನಗಣತಿ ಮಾಡಿದನು.</verse>
				<verse number="20">ಇಸ್ರಯೇಲನ ಚೊಚ್ಚಲ ಮಗ ರೂಬೇನ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 46,500:</verse>
				<verse number="21"></verse>
				<verse number="22">ಸಿಮೆಯೋನ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 59,300:</verse>
				<verse number="23"></verse>
				<verse number="24">ಗಾದ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 45,650:</verse>
				<verse number="25"></verse>
				<verse number="26">ಯೆಹೂದ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 74,600:</verse>
				<verse number="27"></verse>
				<verse number="28">ಇಸ್ಸಾಕಾರ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 54,400:</verse>
				<verse number="29"></verse>
				<verse number="30">ಜೆಬುಲೂನ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 57,400:</verse>
				<verse number="31"></verse>
				<verse number="32">ಜೋಸೆಫನಿಂದ ಹುಟ್ಟಿದವರೊಳಗೆ: ಎಫ್ರಾಯೀಮ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 40,500:</verse>
				<verse number="33"></verse>
				<verse number="34">ಮನಸ್ಸೆ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 32,200:</verse>
				<verse number="35"></verse>
				<verse number="36">ಬೆನ್ಯಾಮೀನ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 35,400:</verse>
				<verse number="37"></verse>
				<verse number="38">ದಾನ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 62,700:</verse>
				<verse number="39"></verse>
				<verse number="40">ಆಶೇರ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 41,500:</verse>
				<verse number="41"></verse>
				<verse number="42">ನಫ್ತಾಲಿ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 53,400:</verse>
				<verse number="43"></verse>
				<verse number="44">ಮೋಶೆ, ಆರೋನ್ ಮತ್ತು ಕುಲಪ್ರತಿನಿಧಿಗಳಾದ ಆ ಹನ್ನೆರಡು ಪ್ರಧಾನರು ಎಣಿಸಿದ ಇಸ್ರಯೇಲರ ಸಂಖ್ಯೆ ಇಷ್ಟು.</verse>
				<verse number="45">ಹೀಗೆ ಇಸ್ರಯೇಲರಲ್ಲಿ ಎಣಿಕೆಯಾದ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನವರಾಗಿದ್ದು ಸೈನಿಕ ಸೇವೆ ಕೈಗೊಳ್ಳಲು ಶಕ್ತರಾಗಿದ್ದವರ ಒಟ್ಟು ಸಂಖ್ಯೆ 6,03,550:</verse>
				<verse number="46"></verse>
				<verse number="47">ಆದರೆ ಲೇವಿಕುಲದ ಕುಟುಂಬಗಳು ಮೇಲ್ಕಂಡ ಲೆಕ್ಕದಲ್ಲಿ ಸೇರಿರಲಿಲ್ಲ.</verse>
				<verse number="48">ಏಕೆಂದರೆ ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದು ಆಜ್ಞಾಪಿಸಿದ್ದರು:</verse>
				<verse number="49">“ನೀನು ಇಸ್ರಯೇಲರನ್ನು ಎಣಿಸುವಾಗ ಲೇವಿಯನ್ನು ಎಣಿಸಬಾರದು.</verse>
				<verse number="50">ಆಜ್ಞಾಶಾಸನಗಳಿರುವ ಗುಡಾರವನ್ನು ಹಾಗು ಅವರ ಸಾಮಾನು ಸರಂಜಾಮುಗಳನ್ನು ನೋಡಿಕೊಳ್ಳುವುದಕ್ಕೆ ಅವರನ್ನು ನೇಮಿಸಬೇಕು. ಅವರು ಆ ಗುಡಾರವನ್ನು ಅದರ ಉಪಕರಣಗಳನ್ನು ಹೊರುವವರಾಗಿರಬೇಕು. ಅದರ ಸೇವೆ ಮಾಡುವವರಾಗಿ ಅದರ ಸುತ್ತಲೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು.</verse>
				<verse number="51">ಹೊರಡುವಾಗ ಆ ಗುಡಾರವನ್ನು ಲೇವಿಯರೇ ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.</verse>
				<verse number="52">ಇಸ್ರಯೇಲರೆಲ್ಲರ ಆಯಾ ಸೇನೆಗಳು ತಮ್ಮ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು.</verse>
				<verse number="53">ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗೆ ಮಾಡಿದರೆ ನನ್ನ ಕೋಪ ಇಸ್ರಯೇಲರ ಮೇಲೆ ಎರಗಲು ಆಸ್ಪದವಿರದು. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.”</verse>
				<verse number="54">ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ನಡೆದುಕೊಂಡರು.</verse>
			</chapter>
			<chapter number="2">
				<verse number="1">ಸರ್ವೇಶ್ವರ ಸ್ವಾಮಿ ಮೋಶೆ - ಆರೋನರಿಗೆ ಕೊಟ್ಟ ಆಜ್ಞೆ ಇದು:</verse>
				<verse number="2">ಇಸ್ರಯೇಲರೆಲ್ಲರೂ ದೇವದರ್ಶನದ ಗುಡಾರದ ಸುತ್ತಲೂ ಸ್ವಲ್ಪ ದೂರವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಪ್ರತಿಯೊಬ್ಬನೂ ತನ್ನ ತನ್ನ ಗೋತ್ರ ಧ್ವಜದ ಹತ್ತಿರ ತನ್ನ ತನ್ನ ದಂಡಿನಲ್ಲೇ ಇಳಿದುಕೊಳ್ಳಬೇಕು.</verse>
				<verse number="3">“ಸೂರ್ಯೋದಯವಾಗುವ ದಿಕ್ಕಿನಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಆ ಕುಲದವರಿಗೆ ನಾಯಕ ಅಮ್ಮಿನಾದಾಬನ ಮಗ ನಹಶೋನ.</verse>
				<verse number="4">ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 74,600:</verse>
				<verse number="5">ಅವರ ಸಮೀಪದಲ್ಲೇ ಇಸ್ಸಾಕಾರ್ ಕುಲದವರೂ ಜೆಬುಲೂನ್ ಕುಲದವರೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಆ ಕುಲದವರಿಗೆ ನಾಯಕ ಚೂವಾರನ ಮಗ ನೆತನೇಲ್;</verse>
				<verse number="6">ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 54,400:</verse>
				<verse number="7">ಜೆಬುಲೂನ್ಯರಿಗೆ ನಾಯಕ ಹೇಲೋನನ ಮಗ ಎಲೀಯಾಬ್,</verse>
				<verse number="8">ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 57,400:</verse>
				<verse number="9">ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರೆಲ್ಲರ ಸಂಖ್ಯೆ - 1,86,400: ಇವರು ಮುಂಭಾಗದಲ್ಲಿ ಹೊರಡಬೇಕು.</verse>
				<verse number="10">“ದಕ್ಷಿಣ ದಿಕ್ಕಿನಲ್ಲಿ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಈ ರೂಬೇನ್ ಕುಲದವರಿಗೆ ನಾಯಕ ಶೆದೇಯೂರನ ಮಗ ಎಲೀಚೂರ;</verse>
				<verse number="11">ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 46,500:</verse>
				<verse number="12">ಅವರ ಸಮೀಪದಲ್ಲೇ ಸಿಮೆಯೋನ್ ಕುಲದವರೂ ಗಾದ್ ಕುಲದವರೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಸಿಮೆಯೋನ್ ಕುಲದವರಿಗೆ ನಾಯಕ ಚೂರೀಷದ್ದೈಯನ ಮಗ ಶೆಲೂಮೀಯೇಲ;</verse>
				<verse number="13">ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 59,300:</verse>
				<verse number="14">ಗಾದ್ ಕುಲದವರಿಗೆ ನಾಯಕ ರೆಗೂವೇಲನ ಮಗ ಎಲ್ಯಾಸಾಫ;</verse>
				<verse number="15">ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 45,650:</verse>
				<verse number="16">ಹೀಗೆ ರೂಬೇನ್ ಕುಲದ ದಂಡಿಗೆ ಸೇರಿದ್ದವರೆಲ್ಲರ ಸಂಖ್ಯೆ - 1,51,450: ಇವರು ಎರಡನೆಯ ದಂಡಾಗಿ ಹೊರಡಬೇಕು.</verse>
				<verse number="17">“ಅನಂತರ ಸೈನ್ಯಗಳ ನಟ್ಟನಡುವೆ ದೇವದರ್ಶನದ ಗುಡಾರ ಮತ್ತು ಲೇವಿಯರ ಪಾಳೆಯದವರು ಹೊರಡಬೇಕು. ಅವರು ಹೇಗೆ ಇಳಿದುಕೊಂಡಿದ್ದರೋ ಹಾಗೆಯೇ ತಮ್ಮ ತಮ್ಮ ಧ್ವಜಗಳನ್ನು ಹಿಡಿದುಕೊಂಡು ತಮ್ಮ ತಮ್ಮ ಗೊತ್ತಾದ ಸ್ಥಾನದಲ್ಲಿ ಹೊರಡಬೇಕು.</verse>
				<verse number="18">ಪಶ್ಚಿಮ ದಿಕ್ಕಿನಲ್ಲಿ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರಿಗೆ ನಾಯಕ ಅಮ್ಮೀಹೂದನ ಮಗ ಎಲೀಷಾಮಾ;</verse>
				<verse number="19">ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 40,500:</verse>
				<verse number="20">ಅವರ ಸಮೀಪದಲ್ಲೇ ಮನಸ್ಸೆ ಕುಲದವರು ಬೆನ್ಯಾಮೀನ್ ಕುಲದವರೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಮನಸ್ಸೆ ಕುಲದವರಿಗೆ ನಾಯಕ ಪೆದಾಚೂರನ ಮಗ ಗಮ್ಲೀಯೆಲ್;</verse>
				<verse number="21">ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ -32,200:</verse>
				<verse number="22">ಬೆನ್ಯಾಮೀನ್ ಕುಲದವರಿಗೆ ನಾಯಕ ಗಿದ್ಯೋನಿಯ ಮಗ ಅಬೀದಾನ್.</verse>
				<verse number="23">ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ -35,400:</verse>
				<verse number="24">ಹೀಗೆ ಎಫ್ರಾಯೀಮರ ದಂಡಿಗೆ ಸೇರಿದವರೆಲ್ಲರ ಸಂಖ್ಯೆ - 1,08,100: ಇವರು ಮೂರನೆಯ ದಂಡಾಗಿ ಹೊರಡಬೇಕು.</verse>
				<verse number="25">ಉತ್ತರ ದಿಕ್ಕಿನಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರಿಗೆ ನಾಯಕ ಅಮ್ಮೀಷದ್ದೈಯನ ಮಗ ಅಹೀಗೆಜೆರ್;</verse>
				<verse number="26">ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 62,700:</verse>
				<verse number="27">ಅವರ ಸಮೀಪದಲ್ಲೇ ಆಶೇರ್ ಕುಲದವರು ಮತ್ತು ನಫ್ತಾಲಿ ಕುಲದವರು ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಆಶೇರ್ ಕುಲದವರಿಗೆ ನಾಯಕ ಒಕ್ರಾನನ ಮಗ ಪಗೀಯೇಲ್;</verse>
				<verse number="28">ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 41,500:</verse>
				<verse number="29">ನಫ್ತಾಲಿ ಕುಲದವರಿಗೆ ನಾಯಕ ಏನಾನನ ಮಗ ಅಹೀರ;</verse>
				<verse number="30">ಅವರಲ್ಲಿ ಎಣಿಕೆಯಾದ ಸೈನಿಕರ ಸಂಖ್ಯೆ - 53,400:</verse>
				<verse number="31">ಹೀಗೆ ದಾನ್ ಕುಲದ ದಂಡಿಗೆ ಸೇರಿದವರೆಲ್ಲರ ಸಂಖ್ಯೆ - 1,57,600: ಇವರು ಕಡೆಯ ದಂಡಾಗಿ ಹೊರಡಬೇಕು.</verse>
				<verse number="32">ಇವರೇ ಇಸ್ರಯೇಲರಲ್ಲಿ ಗೋತ್ರಗೋತ್ರಗಳ ಪ್ರಕಾರ ಎಣಿಕೆಯಾದವರು. ಆ ದಂಡುಗಳಲ್ಲಿ ಸೈನಿಕರಾಗಿ ಎಣಿಕೆಯಾದ ಸೈನಿಕರ ಸಂಖ್ಯೆ - 6,03,500:</verse>
				<verse number="33">ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಲೇವಿಯರು ಇತರ ಇಸ್ರಯೇಲರ ಸಂಗಡ ಎಣಿಕೆಯಾಗಲಿಲ್ಲ.</verse>
				<verse number="34">ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು. ಹಾಗೆಯೆ ದಂಡು ದಂಡಾಗಿ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಅಂತೆಯೇ ಗೋತ್ರ ಕುಟುಂಬಗಳ‍ ಪ್ರಕಾರ ಹೊರಡುತ್ತಿದ್ದರು.</verse>
			</chapter>
			<chapter number="3">
				<verse number="1">ಸೀನಾಯಿ ಬೆಟ್ಟದ ಮೇಲೆ ಸರ್ವೇಶ್ವರ ಸ್ವಾಮಿ ಮೋಶೆಯ ಸಂಗಡ ಮಾತಾಡಿದ ಕಾಲದಲ್ಲಿದ್ದ ಮೋಶೆ - ಆರೋನರ ವಂಶಸ್ಥರ ವಿವರ:</verse>
				<verse number="2">ಆರೋನನಿಗಿದ್ದ ಮಕ್ಕಳ ಹೆಸರುಗಳು: ಜೇಷ್ಠಪುತ್ರ ನಾದಾಬ್, ಅಬೀಹು, ಎಲ್ಲಾಜಾರ್ ಮತ್ತು ಈತಾಮಾರ್.</verse>
				<verse number="3">ಯಾಜಕ ಸೇವಾವೃತ್ತಿಯನ್ನು ಕೈಗೊಳ್ಳುವುದಕ್ಕೆ ಅಭಿಷೇಕದಿಂದ ಪ್ರತಿಷ್ಠಿತರಾದವರು ಇವರೇ.</verse>
				<verse number="4">ನಾದಾಬ್ ಮತ್ತು ಅಬೀಹೂ ಎಂಬಿಬ್ಬರು ಸೀನಾಯಿ ಮರುಭೂಮಿಯಲ್ಲಿ ಸರ್ವೇಶ್ವರ ಆಜ್ಞಾಪಿಸದ ಅಪವಿತ್ರ ಅಗ್ನಿಯಿಂದ ಧೂಪವನ್ನು ಸಮರ್ಪಿಸಿದರು. ಈ ಕಾರಣ ಸರ್ವೇಶ್ವರನ ಸನ್ನಿಧಿಯಲ್ಲಿ ಸತ್ತುಹೋದರು. ಅವರಿಗೆ ಮಕ್ಕಳಿರಲಿಲ್ಲ. ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಮಿಕ್ಕವರು ತಮ್ಮ ತಂದೆಯ ಕೈಕೆಳಗೆ ಯಾಜಕರಾಗಿ ಸೇವೆ ಸಲ್ಲಿಸಿದರು.</verse>
				<verse number="5">ಸರ್ವೇಶ್ವರ ಮೋಶೆಗೆ ಇತ್ತ ಆಜ್ಞೆ ಇದು:</verse>
				<verse number="6">“ನೀನು ಲೇವಿಕುಲದವರನ್ನು ಕರೆದುತಂದು ಅವರು ದೇವತಾ ಕಾರ್ಯಗಳಲ್ಲಿ ಯಾಜಕ ಆರೋನನಿಗೆ ಸಹಾಯಕರಾಗಿರುವಂತೆ ನಿಯುಕ್ತಗೊಳಿಸು.</verse>
				<verse number="7">ಅವರು ದೇವದರ್ಶನದ ಗುಡಾರದ ಬಳಿಯಲ್ಲಿರಬೇಕು; ಆರೋನನಿಗೂ ಇಡೀ ಸಮಾಜಕ್ಕೂ ನೆರವಾಗಿ ದೇವಸ್ಥಾನದ ಪರಿಚರ್ಯವನ್ನು ನಡೆಸಬೇಕು.</verse>
				<verse number="8">ದೇವದರ್ಶನದ ಗುಡಾರಕ್ಕೆ ಸೇರಿದ ಉಪಕರಣಗಳನ್ನು ನೋಡಿಕೊಳ್ಳಬೇಕು. ಇಸ್ರಯೇಲರ ಪರವಾಗಿ ದೇವಸ್ಥಾನದ ಸೇವಾಕಾರ್ಯಗಳನ್ನು ನಡೆಸಬೇಕು.</verse>
				<verse number="9">ನೀನು ಲೇವಿಯರನ್ನು ಆರೋನನಿಗೂ ಅವನ ಮಕ್ಕಳಿಗೂ ಒಪ್ಪಿಸು. ಇಸ್ರಯೇಲರಲ್ಲಿ ಆರೋನನಿಗೆ ಸಂಪೂರ್ಣ ಶರಣರು ಇವರೇ.</verse>
				<verse number="10">ಯಾಜಕ ಸೇವಾವೃತ್ತಿಯನ್ನು ಕೈಗೊಳ್ಳುವುದಕ್ಕೆ ಆರೋನನನ್ನು ಹಾಗೂ ಅವನ ಮಕ್ಕಳನ್ನು ನೇಮಿಸು. ಬೇರೆ ಯಾರಾದರು ಆ ವೃತ್ತಿಗೆ ಕೈ ಹಾಕಿದರೆ ಅಂಥವನಿಗೆ ಮರಣ ಶಿಕ್ಷೆಯಾಗಬೇಕು.</verse>
				<verse number="11">ಸರ್ವೇಶ್ವರ ಮೋಶೆಗೆ ಹೀಗೆಂದರು:</verse>
				<verse number="12">“ನಾನು ಇಸ್ರಯೇಲರಲ್ಲಿ ಜೇಷ್ಠಪುತ್ರರಿಗೆ ಬದಲಾಗಿ ಲೇವಿಯರನ್ನೇ ಆರಿಸಿಕೊಂಡಿದ್ದೇನೆಂದು ತಿಳಿ. ಆದುದರಿಂದ ಲೇವಿಯರು ನನಗೆ ಸೇರಿದವರು, ನನ್ನ ಸೊತ್ತು.</verse>
				<verse number="13">ವಾಸ್ತವವಾಗಿ ಇಸ್ರಯೇಲರ ಜೇಷ್ಠರೆಲ್ಲರು ನನ್ನ ಸೊತ್ತು, ಈಜಿಪ್ಟ್ ದೇಶದಲ್ಲಿ ಜೇಷ್ಠವಾದುದೆಲ್ಲವನ್ನು ನಾನು ಸಂಹಾರಮಾಡಿದಾಗ ಇಸ್ರಯೇಲರಲ್ಲಿಯ ಜೇಷ್ಠ ಮನುಷ್ಯರನ್ನೂ ಪಶುಪ್ರಾಣಿಗಳನ್ನೂ ನನ್ನ ಸ್ವಂತಕ್ಕಾಗಿ ಪ್ರತಿಷ್ಠಿಸಿಕೊಂಡೆ. ಆದರೆ ಈಗ ಅಂಥವರಿಗೆ ಬದಲಾಗಿ ಲೇವಿಯರನ್ನು ಆರಿಸಿಕೊಂಡಿದ್ದೇನೆ, ಅವರು ಸರ್ವೇಶ್ವರನಾದ ನನ್ನವರು.”</verse>
				<verse number="14">ಸರ್ವೇಶ್ವರ ಸೀನಾಯಿ ಮರುಭೂಮಿಯಲ್ಲಿ ಮೋಶೆಗೆ</verse>
				<verse number="15">“ನೀನು ಲೇವಿಯರಲ್ಲಿ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರನ್ನೆಲ್ಲಾ ಗೋತ್ರ ಕುಟುಂಬಗಳ ಪ್ರಕಾರ ಎಣಿಸಬೇಕು,” ಎಂದು ಆಜ್ಞಾಪಿಸಿದರು.</verse>
				<verse number="16">ಸ್ವಾಮಿಯ ಅಪ್ಪಣೆಯ ಮೇರೆಗೆ ಮೋಶೆ ಅವರನ್ನು ಎಣಿಸಿದನು.</verse>
				<verse number="17">ಲೇವಿಯ ಮಕ್ಕಳ ಹೆಸರುಗಳು ಇವು: ಗೇರ್ಷೋನ್, ಕೆಹಾತ್, ಮೆರಾರೀ.</verse>
				<verse number="18">ಇವರು ಗೋತ್ರಸ್ಥಾಪಕರು. ಗೋತ್ರಸ್ಥಾಪಕ ಗೇರ್ಷೋನನ ಮಕ್ಕಳು - ಲಿಬ್ನಿ, ಶಿಮ್ಮೀ ಎಂಬುವರು.</verse>
				<verse number="19">ಗೋತ್ರಸ್ಥಾಪಕ ಕೆಹಾತನ ಮಕ್ಕಳು - ಅಮ್ರಾಮ್, ಇಚ್ಛಾರ್, ಹೆಬ್ರೋನ್, ಉಜ್ಜೀಯೇಲ್ ಎಂಬುವರು.</verse>
				<verse number="20">ಮೆರಾರಿಯ ಮಕ್ಕಳು - ಮಹ್ಲೀ, ಮೂಷೀ ಎಂಬವರು. ಗೋತ್ರ ಕುಟುಂಬಗಳ ಪ್ರಕಾರ ಇವರೇ ಲೇವಿಯ ವಂಶದವರು.</verse>
				<verse number="21">ಗೇರ್ಷೋನ್ ವಂಶದವರಲ್ಲಿ ಲಿಬ್ನೀ ಗೋತ್ರದವರು ಶಿಮ್ಮೀ ಗೋತ್ರದವರೂ ಇದ್ದರು.</verse>
				<verse number="22">ಅವರಲ್ಲಿ ಎಣಿಕೆಯಾದ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರ ಸಂಖ್ಯೆ 7,500:</verse>
				<verse number="23">ಗೇರ್ಷೋನ್ಯರ ಕುಟುಂಬಗಳವರು ದೇವದರ್ಶನದ ಗುಡಾರದ ಹಿಂದುಗಡೆ ಅಂದರೆ ಪಶ್ಚಿಮ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕಾಗಿತ್ತು.</verse>
				<verse number="24">ಗೇರ್ಷೋನ್ಯರ ಗೋತ್ರಗಳ ಮುಖ್ಯಸ್ಥ ಲಾಯೇಲನ ಮಗ ಎಲ್ಯಾಸಾಫ್.</verse>
				<verse number="25">ದೇವದರ್ಶನದ ಗುಡಾರದ ಉಪಕರಣಗಳಲ್ಲಿ ಗೇರ್ಷೋನನ ವಂಶದವರು ನೋಡಿಕೊಳ್ಳಬೇಕಾಗಿದ್ದವುಗಳು ಇವು - ಗುಡಾರ, ಅದರ ಮೇಲಿದ್ದ ಡೇರೆಯ ಬಟ್ಟೆ, ಅದರ ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಲ್ಲಿರುವ ಪರದೆ</verse>
				<verse number="26">ಗುಡಾರದ ಮತ್ತು ಬಲಿಪೀಠದ ಸುತ್ತಲಿರುವ ಅಂಗಳದ ತೆರೆಗಳು, ಅಂಗಳದ ಬಾಗಿಲಿನ ಪರದೆ ಮತ್ತು ಅವುಗಳ ಹಗ್ಗಗಳು. ಇಂಥ ಎಲ್ಲಾ ವಿಧವಾದ ಸೇವೆಯನ್ನು ಗೇರ್ಷೋನ್ಯರು ಮಾಡಬೇಕಾಗಿತ್ತು.</verse>
				<verse number="27">ಕೆಹಾತ್ ವಂಶದವರಲ್ಲಿ ಅಮ್ರಾಮ್ ಗೋತ್ರದವರು, ಇಚ್ಹಾರ್ ಗೋತ್ರದವರು, ಹೆಬ್ರೋನ್ ಗೋತ್ರದವರು ಹಾಗೂ ಉಜ್ಜೀಯೇಲ್ ಗೋತ್ರದವರು ಇದ್ದರು.</verse>
				<verse number="28">ಅವರಲ್ಲಿ ದೇವಸ್ಥಾನ ನೋಡಿಕೊಳ್ಳತಕ್ಕವರು ಅಂದರೆ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರ ಸಂಖ್ಯೆ 8,600:</verse>
				<verse number="29">ಕೆಹಾತ್ಯರ ಕುಟುಂಬಗಳವರು ದೇವದರ್ಶನದ ಗುಡಾರದ ದಕ್ಷಿಣ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕಾಗಿತ್ತು.</verse>
				<verse number="30">ಈ ಕೆಹಾತ್ಯರ ಗೋತ್ರಗಳ ಮುಖ್ಯಸ್ಥನು ಉಜ್ಜೀಯೇಲನ ಮಗ ಎಲೀಚಾಫಾನ್.</verse>
				<verse number="31">ಅವರು ನೋಡಿಕೊಳ್ಳಬೇಕಾಗಿದ್ದವುಗಳು ಇವು - ಮಂಜೂಷ, ಮೇಜು, ದೀಪಸ್ತಂಭ, ವೇದಿಕೆಗಳು, ದೇವಸ್ಥಾನದ ಸೇವೋಪಕರಣಗಳು ಹಾಗೂ ಒಳಗಣ ತೆರೆ. ಇಂಥ ಎಲ್ಲಾ ವಿಧವಾದ ಸೇವೆಯನ್ನು ಅವರು ಮಾಡಬೇಕಾಗಿತ್ತು.</verse>
				<verse number="32">ಇದಲ್ಲದೆ ಮಹಾಯಾಜಕ ಆರೋನನ ಮಗ ಎಲ್ಲಾಜಾರನು ಲೇವಿಯರ ಮುಖ್ಯಸ್ಥರಿಗೆ ಅಧ್ಯಕ್ಷನಾಗಿದ್ದ; ದೇವಸ್ಥಾನವನ್ನು ಕಾಯುವವರಿಗೆ ಮೇಲ್ವಿಚಾರಕನಾಗಿದ್ದ.</verse>
				<verse number="33">ಮೆರಾರೀ ವಂಶದವರಲ್ಲಿ ಮಹ್ಲೀ ಗೋತ್ರದವರು ಮತ್ತು ಮೂಷಿ ಗೋತ್ರದವರು ಇದ್ದರು.</verse>
				<verse number="34">ಇವರಲ್ಲಿ ಎಣಿಕೆಯಾದ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರ ಸಂಖ್ಯೆ - 6,200:</verse>
				<verse number="35">ಮೆರಾರೀಯರ ಗೋತ್ರಗಳ ಮುಖ್ಯಸ್ಥನು ಅಬೀಹೈಲನ ಮಗ ಚೂರೀಯೇಲ್. ಇವರು ದೇವದರ್ಶನದ ಗುಡಾರದ ಉತ್ತರ ದಿಕ್ಕಿನಲ್ಲಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕಾಗಿತ್ತು.</verse>
				<verse number="36">ಮೇರಾರೀ ವಂಶದವರ ವಶಕ್ಕೆ ಒಪ್ಪಿಸಲಾಗಿದ್ದವುಗಳು ಇವು - ಗುಡಾರದ ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆ ಕಲ್ಲುಗಳು,</verse>
				<verse number="37">ಇವುಗಳ ಉಪಕರಣಗಳು, ಅಂಗಳದ ಸುತ್ತಲಿದ್ದ ಕಂಬಗಳು, ಅವುಗಳ ಗದ್ದಿಗೆ ಕಲ್ಲುಗಳು, ಗೂಟಗಳು ಮತ್ತು ಹಗ್ಗಗಳು. ಇಂಥ ಎಲ್ಲಾ ವಿಧವಾದ ಸೇವೆಯನ್ನು ಇವರೇ ಮಾಡಬೇಕಾಗಿತ್ತು.</verse>
				<verse number="38">ದೇವದರ್ಶನದ ಗುಡಾರದ ಪೂರ್ವದಿಕ್ಕಿನಲ್ಲಿ, ಅಂದರೆ ಸೂರ್ಯೋದಯವಾಗುವ ಕಡೆಯಲ್ಲಿ ಮೋಶೆ ಮತ್ತು ಆರೋನನು ಹಾಗೂ ಆರೋನನ ಮಕ್ಕಳು ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕಾಗಿತ್ತು. ಅವರು ಇಸ್ರಯೇಲರ ಪರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕಾಗಿತ್ತು. ಬೇರೆ ಯಾರಾದರೂ ಆ ಕೆಲಸಕ್ಕೆ ಕೈ ಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕಾಗಿತ್ತು.</verse>
				<verse number="39">ಮೋಶೆ ಮತ್ತು ಆರೋನರು ಸರ್ವೇಶ್ವರನ ಅಪ್ಪಣೆಯ ಮೇರೆಗೆ ಕುಟುಂಬಗಳ ಪ್ರಕಾರ ಎಣಿಸಿದ ಲೇವಿಯರ ಅಂದರೆ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರ ಸಂಖ್ಯೆ - 22,000:</verse>
				<verse number="40">ಸರ್ವೇಶ್ವರ ಮೋಶೆಗೆ, “ನೀನು ಇಸ್ರಯೇಲರಲ್ಲಿ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಜೇಷ್ಠಪುತ್ರರನ್ನು ಹೆಸರು ಹಿಡಿದು ಎಣಿಕೆಮಾಡು.</verse>
				<verse number="41">ಆದರೆ ಸರ್ವೇಶ್ವರನೆಂಬ ನನ್ನ ಸೊತ್ತಾಗುವುದಕ್ಕೆ ನೀನು ಇಸ್ರಯೇಲರ ಚೊಚ್ಚಲಾದ ಪಶುಪ್ರಾಣಿಗಳಿಗೆ ಬದಲಾಗಿ ಲೇವಿಯರ ಪಶುಪ್ರಾಣಿಗಳನ್ನು ತೆಗೆದುಕೋ,” ಎಂದು ಆಜ್ಞಾಪಿಸಿದರು.</verse>
				<verse number="42">ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಇಸ್ರಯೇಲರಲ್ಲಿದ್ದ ಜೇಷ್ಠರಾದವರೆಲ್ಲರನ್ನು ಎಣಿಕೆಮಾಡಿದನು.</verse>
				<verse number="43">ಹೆಸರು ಹಿಡಿದು ಎಣಿಕೆಯಾದವರ, ಅಂದರೆ ಒಂದು ತಿಂಗಳ ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರ ಸಂಖ್ಯೆ - 22,273:</verse>
				<verse number="44">ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದ್ದೇನೆಂದರೆ -</verse>
				<verse number="45">“ನೀನು ಇಸ್ರಯೇಲರ ಜೇಷ್ಠರಿಗೆ ಬದಲಾಗಿ ಲೇವಿಯರನ್ನು ಮತ್ತು ಅವರ ಚೊಚ್ಚಲಾದ ಪಶುಪ್ರಾಣಿಗಳಿಗೆ ಬದಲಾಗಿ ಲೇವಿಯರ ಪಶುಪ್ರಾಣಿಗಳನ್ನು ತೆಗೆದುಕೋ. ಲೇವಿಯರೇ ನನ್ನ ಸೊತ್ತು. ನಾನು ಸರ್ವೇಶ್ವರ!</verse>
				<verse number="46">ಲೇವಿಯರ ಸಂಖ್ಯೆಗಿಂತ 273 ಮಂದಿ ಜೇಷ್ಠರು ಇಸ್ರಯೇಲರಲ್ಲಿ ಹೆಚ್ಚಾಗಿದ್ದಾರೆ. ಆದುದರಿಂದ ಅವರನ್ನು ವಿಮೋಚಿಸುವುದಕ್ಕಾಗಿ ತಲೆ ಒಂದಕ್ಕೆ ಐದು ಬೆಳ್ಳಿ ನಾಣ್ಯಗಳಂತೆ ಈಡು ತೆಗೆದುಕೊ.</verse>
				<verse number="47">ದೇವರ ಸೇವೆಗೆ ನಿಗದಿಯಾದ ನಾಣ್ಯಗಳ ಮೇರೆಗೆ ತೆಗೆದುಕೊಳ್ಳಬೇಕು.</verse>
				<verse number="48">ಆ ಹೆಚ್ಚಾಗಿರುವವರ ವಿಮೋಚನೆಗಾಗಿ ಅವರು ಕೊಡುವ ಹಣವನ್ನು ಆರೋನನಿಗೂ ಅವನ ಮಕ್ಕಳಿಗೂ ಕೊಡು,” ಎಂದರು.</verse>
				<verse number="49">ಅದರಂತೆಯೇ ಮೋಶೆ ಲೇವಿಯರಿಗಿಂತ ಹೆಚ್ಚಾದ ಜೇಷ್ಠರನ್ನು ವಿಮೋಚಿಸುವುದಕ್ಕಾಗಿ ಹಣವನ್ನು ತೆಗೆದುಕೊಂಡನು.</verse>
				<verse number="50">ದೇವರ ಸೇವೆಗೆ ನಿಗದಿಯಾದ ನಾಣ್ಯದ ಮೇರೆಗೆ 1365 ನಾಣ್ಯಗಳನ್ನು ತೆಗೆದುಕೊಂಡನು.</verse>
				<verse number="51">ಸರ್ವೇಶ್ವರನ ಆಜ್ಞೆಯಂತೆ ವಿಮೋಚನೆಯ ಹಣವನ್ನು ಆರೋನನಿಗೂ ಅವನ ಮಕ್ಕಳಿಗೂ ಕೊಟ್ಟನು.</verse>
			</chapter>
			<chapter number="4">
				<verse number="1">ಸರ್ವೇಶ್ವರ ಸ್ವಾಮಿ, ಮೋಶೆ - ಆರೋನರಿಗೆ ಹೀಗೆಂದು ಆಜ್ಞಾಪಿಸಿದರು:</verse>
				<verse number="2">“ನೀವು ಲೇವಿಯರಲ್ಲಿಯ ಕೆಹಾತ್ಯರನ್ನು ಎಣಿಕೆಮಾಡಬೇಕು, ಅವರಲ್ಲಿ ಮೂವತ್ತರಿಂದ ಐವತ್ತು ವರ್ಷದವರೆಗೆ ವಯಸ್ಸಾದವರು ಹಾಗೂ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾದವರನ್ನು ಗೋತ್ರಕುಟುಂಬಗಳ ಪ್ರಕಾರ ಲೆಕ್ಕಿಸಬೇಕು.</verse>
				<verse number="3"></verse>
				<verse number="4">“ಕೆಹಾತ್ಯರು ಕೈಗೊಳ್ಳಬೇಕಾದ ಕರ್ತವ್ಯಗಳು ಇವು: ದೇವದರ್ಶನದ ಗುಡಾರದಲ್ಲಿ ಪರಮ ಪವಿತ್ರವಾದ ವಸ್ತುಗಳನ್ನು ಅವರು ನೋಡಿಕೊಳ್ಳಬೇಕು.</verse>
				<verse number="5">ದಂಡು ಹೊರಡುವಾಗ ಆರೋನನು ಮತ್ತು ಅವನ ಮಕ್ಕಳು ಒಳಗೆ ಬಂದು ಗರ್ಭಗುಡಿಯನ್ನು ಮರೆಮಾಡುವ ತೆರೆಯನ್ನು ಇಳಿಸಿ ಅದರಿಂದ ಆಜ್ಞಾಶಾಸನಗಳ ಮಂಜೂಷವನ್ನು ಮುಚ್ಚಬೇಕು.</verse>
				<verse number="6">ಅದರ ಮೇಲೆ ಹಸನಾದ ತೊಗಲನ್ನು ಮತ್ತು ನೀಲಿ ಬಟ್ಟೆಯನ್ನು ಹೊದಿಸಬೇಕು. (ಮಂಜೂಷದ ಬಳೆಗಳಿಗೆ) ಹೊರುವ ಕೋಲುಗಳನ್ನು ಸಿಕ್ಕಿಸಬೇಕು.</verse>
				<verse number="7">“ಸನ್ನಿಧಿ ಕಾಣಿಕೆಯ ಮೇಜಿನ ಮೇಲೆ ನೀಲಿಬಟ್ಟೆಯನ್ನು ಹಾಸಿ ಅದರ ಮೇಲೆ ಹರಿವಾಣಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು ಹಾಗೂ ದಾನ್ಯದ್ರವ್ಯಾರ್ಪಣೆಯ ಬಟ್ಟಲುಗಳನ್ನು ಅವರು ಇಡಬೇಕು. ನಿತ್ಯಾರ್ಪಣೆಯ ರೊಟ್ಟಿಗಳನ್ನು ಅದರ ಮೇಲೆ ಇಡಬೇಕು.</verse>
				<verse number="8">ಅವೆಲ್ಲವುಗಳ ಮೇಲೆ ರಕ್ತವರ್ಣದ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ, ಹೊರುವ ಕೋಲುಗಳನ್ನು ಸಿಕ್ಕಿಸಬೇಕು.</verse>
				<verse number="9">“ದೀಪಸ್ತಂಭವನ್ನು, ದೀಪದ ಕುಡಿ ತೆಗೆಯುವ ಬಟ್ಟಲುಗಳನ್ನು ಹಾಗೂ ಎಣ್ಣೆಯ ಪಾತ್ರೆಗಳನ್ನು ನೀಲಿಬಟ್ಟೆಯಿಂದ ಮುಚ್ಚಿಡಬೇಕು.</verse>
				<verse number="10">ಅದಕ್ಕೂ ಅದರ ಎಲ್ಲಾ ಉಪಕರಣಗಳಿಗೂ ಹಸನಾದ ತೊಗಲನ್ನು ಹೊದಿಸಿ ಅವುಗಳನ್ನು ಅಡ್ಡ ದಂಡಕ್ಕೆ ಕಟ್ಟಬೇಕು.</verse>
				<verse number="11">“ತರುವಾಯ ಅವರು ಬಂಗಾರದ ವೇದಿಕೆಯ ಮೇಲೆ ನೀಲಿ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ, ಹೊರುವ ಕೋಲುಗಳನ್ನು ಹಾಕಬೇಕು.</verse>
				<verse number="12">ದೇವಸ್ಥಾನದ ಸೇವೋಪಕರಣಗಳನ್ನೆಲ್ಲಾ ನೀಲಿ ಬಟ್ಟೆಯಲ್ಲಿಟ್ಟು, ಹಸನಾದ ತೊಗಲನ್ನು ಹೊದಿಸಿ ಅಡ್ಡ ದಂಡಕ್ಕೆ ಕಟ್ಟಬೇಕು.</verse>
				<verse number="13">ಬಲಿಪೀಠದ ಬೂದಿಯನ್ನು ತೆಗೆದುಬಿಟ್ಟು ಆ ಪೀಠದ ಮೇಲೆ ಊದಾ ವರ್ಣದ ಬಟ್ಟೆಯನ್ನು ಹಾಸಿ</verse>
				<verse number="14">ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಠಿಕೆಗಳು, ಮುಳ್ಳುಗಳು, ಸಲಿಕೆಗಳು ಹಾಗೂ ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.</verse>
				<verse number="15">ಆರೋನನು ಮತ್ತು ಅವನ ಮಕ್ಕಳು ದಂಡು ಹೊರಡುವ ಕಾಲದಲ್ಲಿ ದೇವಸ್ಥಾನದ ಎಲ್ಲ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು. ಮುಟ್ಟಿದರೆ ಬದುಕಲಾರರು. ಕೆಹಾತ್ಯರು ದೇವದರ್ಶನದ ಗುಡಾರದ ಸಲಕರಣೆಗಳಲ್ಲಿ ಹೊರಬೇಕಾದವುಗಳು ಇವೇ.</verse>
				<verse number="16">ಮಹಾಯಾಜಕ ಆರೋನನ ಮಗ ಎಲ್ಲಾಜಾರನು ದೀಪದ ಎಣ್ಣೆಯನ್ನು, ಪರಿಮಳ ಧೂಪವನ್ನು, ಅನುದಿನ ನೈವೇದ್ಯ ಮಾಡುವ ಧಾನ್ಯದ್ರವ್ಯಗಳನ್ನು ಹಾಗೂ ಅಭಿಷೇಕ ತೈಲವನ್ನು ತನ್ನ ವಶದಲ್ಲೇ ಇಟ್ಟುಕೊಳ್ಳಬೇಕು. ದೇವದರ್ಶನದ ಗುಡಾರದ ಎಲ್ಲ ಭಾಗಗಳು, ಅದರಲ್ಲಿರುವ ಸಮಸ್ತ ವಸ್ತುಗಳು ಪಾತ್ರೆಪರಿಕರಗಳು ಹಾಗೂ ಅವುಗಳಲ್ಲಿರುವುದೆಲ್ಲವೂ ಅವನ ಮೇಲ್ವಿಚಾರಣೆಯಲ್ಲಿರಬೇಕು.</verse>
				<verse number="17">ಸರ್ವೇಶ್ವರ ಮೋಶೆ - ಆರೋನರಿಗೆ ಹೀಗೆಂದು ಆಜ್ಞಾಪಿಸಿದರು:</verse>
				<verse number="18">“ಕೆಹಾತ್ಯರ ಗೋತ್ರಕುಟುಂಬಗಳವರು ಲೇವಿಯರೊಳಗೆ ಉಳಿಯದೆ ನಾಶವಾಗುವುದಕ್ಕೆ ಆಸ್ಪದಕೊಡಬೇಡಿ.</verse>
				<verse number="19">ಪರಮ ಪವಿತ್ರವಾದ ವಸ್ತುಗಳ ಹತ್ತಿರಕ್ಕೆ ಬರುವಾಗ ಅವರು ಸಾಯದಂತೆ ಎಚ್ಚರಿಕೆ ವಹಿಸಿರಿ. ಆರೋನನು ಮತ್ತು ಅವನ ಮಕ್ಕಳು ಒಳಗೆ ಬಂದು ಅವರವರ ಕೆಲಸಗಳನ್ನು ಹೊರಬೇಕಾದ ಹೊರೆಗಳನ್ನು ಗೊತ್ತುಮಾಡಬೇಕು.</verse>
				<verse number="20">ಕೆಹಾತ್ಯರೇ ಒಳಗೆ ಬಂದು, ಒಂದು ಕ್ಷಣ ಮಾತ್ರವೂ ಆ ಪವಿತ್ರ ವಸ್ತುಗಳನ್ನು ನೋಡದಿರಲಿ; ನೋಡಿ ಸಾಯದಿರಲಿ.</verse>
				<verse number="21">ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆ ಇದು:</verse>
				<verse number="22">“ನೀನು ಗೇರ್ಷೋನ್ಯರನ್ನು ಲೆಕ್ಕಿಸಬೇಕು. ಅವರಲ್ಲಿ ಮೂವತ್ತರಿಂದ ಐವತ್ತು ವರ್ಷದವರೆಗೆ ವಯಸ್ಸಾದವರು ಹಾಗೂ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾದವರನ್ನು ಗೋತ್ರಕುಟುಂಬದ ಪ್ರಕಾರ ಎಣಿಸಬೇಕು.</verse>
				<verse number="23"></verse>
				<verse number="24">“ಪರಿಚರ್ಯ ಮಾಡುವುದರಲ್ಲೂ ಹೊರೆಗಳನ್ನು ಹೊರುವುದರಲ್ಲೂ ಗೇರ್ಷೋನ್ಯರು ಮಾಡಬೇಕಾದ ಕರ್ತವ್ಯ ಇವು:</verse>
				<verse number="25">ಅವರು ದೇವದರ್ಶನದ ಗುಡಾರದ ಬಟ್ಟೆಗಳನ್ನು ಹೊರಬೇಕು - ಅಂದರೆ; ಗುಡಾರ ಅದರ ಹೊದಿಕೆ ಅದರ ಮೇಲಿನ ಹಸನಾದ ತೊಗಲಿನ ಹೊದಿಕೆ, ದೇವದರ್ಶನದ ಗುಡಾರದ ಬಾಗಿಲಿನ ಪರದೆ,</verse>
				<verse number="26">ಗುಡಾರದ ಮತ್ತು ಬಲಿಪೀಠದ ಸುತ್ತಣ ಅಂಗಳದ ತೆರೆಗಳು, ಅದರ ಬಾಗಿಲಿನ ಪರದೆ, ಹಗ್ಗಗಳು ಮತ್ತು ಅವುಗಳ ಎಲ್ಲ ಉಪಕರಣಗಳು, ಇವುಗಳನ್ನು ಹೊರಬೇಕು; ಮತ್ತು ಇವುಗಳಿಗೆ ಸಂಬಂಧಪಟ್ಟ ಎಲ್ಲ ಕೆಲಸಗಳನ್ನು ಅವರೇ ಮಾಡಬೇಕು.</verse>
				<verse number="27">ಗೇರ್ಷೋನ್ಯರು ಹೊರೆ ಹೊರುವುದರಲ್ಲೂ ಬೇರೆ ಪರಿಚರ್ಯ ಮಾಡುವುದರಲ್ಲೂ ಆರೋನನ ಮತ್ತು ಅವನ ಮಕ್ಕಳ ಅಪ್ಪಣೆಯ ಪ್ರಕಾರವೇ ನಡೆಯಬೇಕು. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು.</verse>
				<verse number="28">ದೇವದರ್ಶನದ ಗುಡಾರದ ವಿಷಯದಲ್ಲಿ ಗೇರ್ಷೋನ್ಯರು ಮಾಡಬೇಕಾದ ಕರ್ತವ್ಯ ಇದೇ. ಮಹಾಯಾಜಕ ಆರೋನನ ಮಗ ಈತಾಮಾರನು ಅವರ ಮೇಲ್ವಿಚಾರಣೆಯನ್ನು ಮಾಡಬೇಕು</verse>
				<verse number="29">“ಮೆರಾರೀಯರಲ್ಲೂ ಯಾರಾರು ಮೂವತ್ತರಿಂದ ಐವತ್ತು ವರ್ಷ ವಯಸ್ಸಿನವರಿದ್ದಾರೋ ಹಾಗೂ</verse>
				<verse number="30">ದೇವದರ್ಶನದ ಗುಡಾರದ ಸೇವೆಮಾಡಲು ಯೋಗ್ಯರಾಗಿದ್ದಾರೋ ಅವರನ್ನು ಗೋತ್ರಕುಟುಂಬಗಳ ಪ್ರಕಾರ ಎಣಿಕೆಮಾಡು.</verse>
				<verse number="31">ದೇವದರ್ಶನದ ಗುಡಾರದ ವಿಷಯದಲ್ಲಿ ಅವರು ಮಾಡಬೇಕಾದ ಕರ್ತವ್ಯಗಳು ಯಾವುವೆಂದರೆ -</verse>
				<verse number="32">ಅವರು ಗುಡಾರದ ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಗದ್ದಿಗೆ ಕಲ್ಲುಗಳನ್ನು, ಗೂಟಗಳನ್ನು, ಹಗ್ಗಗಳನ್ನು ಮತ್ತು ಅವುಗಳ ಎಲ್ಲ ಉಪಕರಣಗಳನ್ನು ಹೊರಬೇಕು. ಅವರವರ ಹೊರೆಗಳನ್ನೆಲ್ಲ ನೀವೇ ಹೆಸರಿಸಿ ಗೊತ್ತುಮಾಡಬೇಕು.</verse>
				<verse number="33">ದೇವದರ್ಶನದ ಗುಡಾರದ ವಿಷಯದಲ್ಲಿ ಮೆರಾರೀಯರು ಮಾಡಬೇಕಾದ ಕೆಲಸ ಇದೇ. ಅವರು ಮಹಾಯಾಜಕ ಆರೋನನ ಮಗ ಈತಮಾರನ ಕೈಕೆಳಗೆ ಇದನ್ನೆಲ್ಲಾ ಮಾಡಬೇಕು.”</verse>
				<verse number="34">ಮೋಶೆ ಹಾಗು ಆರೋನರು ಮತ್ತು ಸಮೂಹದ ಮುಖ್ಯಸ್ಥರು ಕೆಹಾತ್ಯರಲ್ಲಿ ಯಾರಾರು ಮೂವತ್ತರಿಂದ ಐವತ್ತು ವರ್ಷದವರೆಗಿನ ವಯಸ್ಸುಳ್ಳವರಾಗಿದ್ದಾರೋ ಹಾಗೂ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾಗಿದ್ದಾರೋ ಅವರನ್ನು ಗೋತ್ರಕುಟುಂಬಗಳ ಪ್ರಕಾರ ಎಣಿಸಿದರು.</verse>
				<verse number="35"></verse>
				<verse number="36">ಅವರಲ್ಲಿ ಕುಟುಂಬಗಳ ಪ್ರಕಾರ ಎಣಿಕೆಯಾದವರ ಸಂಖ್ಯೆ 2750:</verse>
				<verse number="37">ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆಯಂತೆ ಕೆಹಾತ್ಯರನ್ನು ಮೋಶೆ - ಆರೋನರು ಎಣಿಕೆಮಾಡಿದಾಗ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾಗಿದ್ದವರು ಇಷ್ಟೇ ಜನ.</verse>
				<verse number="38">ಗೇರ್ಷೋನ್ಯರಲ್ಲಿ ಮೂವತ್ತರಿಂದ ಐವತ್ತು ವರ್ಷದವರೆಗೆ ವಯಸ್ಸಾಗಿದ್ದವರ ಹಾಗೂ ದೇವದರ್ಶನದ ಗುಡಾರದ ಸೇವೆಗೆ ಸೇರಿದವರೆಂದು</verse>
				<verse number="39"></verse>
				<verse number="40">ಗೋತ್ರಕುಟುಂಬದ ಪ್ರಕಾರ ಎಣಿಕೆಯಾದವರ ಸಂಖ್ಯೆ - 2630:</verse>
				<verse number="41">ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಹಾಗು ಆರೋನರಿಂದ ಎಣಿಕೆಯಾಗಿ ದೇವದರ್ಶನದ ಗುಡಾರದ ಸೇವೆಗೆ ಯೋಗ್ಯರಾಗಿದ್ದವರು ಇಷ್ಟೇ ಮಂದಿ.</verse>
				<verse number="42">ಮೆರಾರೀಯರಲ್ಲಿ ಮೂವತ್ತರಿಂದ ಐವತ್ತರವರೆಗೆ ವಯಸ್ಸಾದವರ ಹಾಗೂ ದೇವದರ್ಶನದ ಗುಡಾರದ ಸೇವೆಗೆ ಸೇರಿದವರೆಂದು</verse>
				<verse number="43"></verse>
				<verse number="44">ಗೋತ್ರಕುಟುಂಬಗಳ ಪ್ರಕಾರ ಎಣಿಕೆಯಾದವರ ಸಂಖ್ಯೆ -3200:</verse>
				<verse number="45">ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಮೆರಾರೀಯರನ್ನು ಮೋಶೆ - ಆರೋನರು ಎಣಿಕೆ ಮಾಡಿದಾಗ ಅವರ ಸಂಖ್ಯೆ ಇಷ್ಟೇ ಇತ್ತು.</verse>
				<verse number="46">ಮೋಶೆ ಹಾಗು ಆರೋನರು ಮತ್ತು ಇಸ್ರಯೇಲರ ಮುಖ್ಯಸ್ಥರು ಲೇವಿಯರಲ್ಲಿ ಮೂವತ್ತರಿಂದ ಐವತ್ತರವರೆಗೆ ವಯಸ್ಸಾಗಿದ್ದವರನ್ನು ಮತ್ತು ದೇವದರ್ಶನದ ಗುಡಾರದ ಸೇವೆಯನ್ನು ಕೈಗೊಳ್ಳಲು</verse>
				<verse number="47"></verse>
				<verse number="48">ಹಾಗೂ ಅದರ ಹೊರೆಗಳನ್ನು ಹೊರಲು ಶಕ್ತರಾಗಿದ್ದವರನ್ನು ಎಣಿಕೆಮಾಡಿದಾಗ ದೊರೆತ ಸಂಖ್ಯೆ - 8580:</verse>
				<verse number="49">ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿಯೊಬ್ಬನಿಗೆ ಅವನವನ ಕೆಲಸ ಹಾಗೂ ಹೊಣೆಯನ್ನು ಗೊತ್ತುಮಾಡಲಾಯಿತು. ಹೀಗೆ ಸರ್ವೇಶ್ವರನ ಆಜ್ಞೆಯ ಮೇರೆಗೆ ಜನಗಣತಿ ನಡೆಯಿತು.</verse>
			</chapter>
			<chapter number="5">
				<verse number="1">ಸರ್ವೇಶ್ವರ ಸ್ವಾಮಿ, ಮೋಶೆಗೆ ಹೀಗೆಂದರು:</verse>
				<verse number="2">“ಕುಷ್ಠರೋಗಿಗಳಂಥ ಎಲ್ಲ ಅಂಟುರೋಗಿಗಳನ್ನು ಮೇಹಸ್ರಾವವುಳ್ಳವರನ್ನು ಹಾಗೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಯೇಲರಿಗೆ ಆಜ್ಞಾಪಿಸು.</verse>
				<verse number="3">ಅಂಥವರು ಗಂಡಸರೇ ಆಗಿರಲಿ, ಹೆಂಗಸರೇ ಆಗಿರಲಿ, ಅವರೆಲ್ಲರನ್ನು ಪಾಳೆಯದಿಂದ ಹೊರಡಿಸಬೇಕು. ನಾನೇ ವಾಸವಾಗಿರುವ ಪಾಳೆಯವನ್ನು ಅವರು ಅಪವಿತ್ರಗೊಳಿಸಬಾರದು.</verse>
				<verse number="4">ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು. ಅಂಥವರೆಲ್ಲರನ್ನು ಪಾಳೆಯದಿಂದ ಹೊರದೂಡಿದರು.</verse>
				<verse number="5">ಸರ್ವೇಶ್ವರ ಮೋಶೆಗೆ ಹೀಗೆಂದರು: “ನೀನು ಇಸ್ರಯೇಲರಿಗೆ ಇಂತೆಂದು ಆಜ್ಞಾಪಿಸು.</verse>
				<verse number="6">ಯಾವ ಗಂಡಸೇ ಆಗಲಿ ಹೆಂಗಸೇ ಆಗಲಿ, ಮತ್ತೊಬ್ಬನನ್ನು ಮೋಸಗೊಳಿಸಿ ಸರ್ವೇಶ್ವರನಲ್ಲಿ ವಿಶ್ವಾಸ ಕಳೆದುಕೊಳ್ಳುವಂತೆ ಮಾಡಿದರೆ, ಅಂಥವರು ಅಪರಾಧಿಗಳು.</verse>
				<verse number="7">ಅವರು ತಮ್ಮ ಅಪರಾಧವನ್ನು ಒಪ್ಪಿಕೊಳ್ಳಬೇಕು. ಅಲ್ಲದೆ ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಯೊಡನೆ ಐದನೆಯ ಭಾಗವನ್ನು ಹೆಚ್ಚಾಗಿ ಕೊಡಬೇಕು.</verse>
				<verse number="8">ದಂಡವನ್ನು ತೆಗೆದುಕೊಳ್ಳ ತಕ್ಕವನು ತೀರಿಹೋಗಿ ಬಾಧ್ಯಸ್ಥನೂ ಇಲ್ಲದ ಪಕ್ಷಕ್ಕೆ ಆ ದ್ರವ್ಯ ಸರ್ವೇಶ್ವರನಿಗೆ ಸೇರಬೇಕು. ಅದು ಮತ್ತು ದೋಷಪರಿಹಾರಕ್ಕಾಗಿ ಅರ್ಪಿಸಲ್ಪಡುವ ಪ್ರಾಯಶ್ಚಿತ್ತ ಬಲಿಪ್ರಾಣಿಯಾದ ಟಗರು ಇವೆರಡೂ ಯಾಜಕನಿಗೆ ಸೇರಬೇಕು.</verse>
				<verse number="9">ಇಸ್ರಯೇಲಿನ ಜನರು ಪ್ರತ್ಯೇಕಿಸಿ ಯಾಜಕನಿಗೆ ಒಪ್ಪಿಸುವ ಪವಿತ್ರ ವಸ್ತುಗಳೆಲ್ಲವೂ ಯಾಜಕನವುಗಳಾಗಿಯೇ ಇರಬೇಕು.</verse>
				<verse number="10">ಒಬ್ಬನು ಸರ್ವೇಶ್ವರನಿಗೆ ಮೀಸಲಾಗಿಟ್ಟದ್ದನ್ನು ಯಾವ ಯಾಜಕನಿಗೆ ತಂದೊಪ್ಪಿಸುತ್ತಾನೋ ಅದು ಅವನದಾಗಿಯೇ ಇರಬೇಕು.</verse>
				<verse number="11">ಸರ್ವೇಶ್ವರ ಮೋಶೆಗೆ ಹೀಗೆಂದರು: “ನೀನು ಇಸ್ರಯೇಲರಿಗೆ ಹೀಗೆ ಆಜ್ಞಾಪಿಸು -</verse>
				<verse number="12">ಒಬ್ಬನ ಹೆಂಡತಿ ತಪ್ಪುದಾರಿ ಹಿಡಿದು, ತನ್ನ ಗಂಡನಿಗೆ ಅಪ್ರಾಮಾಣಿಕಳಾಗಿ ನಡೆದು ಸಿಕ್ಕಿಕೊಳ್ಳದೆ, ಸಾಕ್ಷಿಯಿಲ್ಲದೆ</verse>
				<verse number="13">ಗುಟ್ಟಾಗಿಯೇ ಪರಪುರುಷನೊಡನೆ ಸಂಗಮಿಸಿ, ಗಂಡನಿಗೆ ದ್ರೋಹಿಯಾಗಿ ಅಶುದ್ಧಳಾಗಿರಬಹುದು.</verse>
				<verse number="14">ಅಥವಾ ಹಾಗೆ ಮಾಡದೆ ಕೆಟ್ಟುಹೋಗದೆ ಇದ್ದರೂ ಕೆಟ್ಟುಹೋದಳೆಂದು ಗಂಡನ ಸಂಶಯಕ್ಕೆ ಗುರಿಯಾಗಿರಬಹುದು.</verse>
				<verse number="15">ಈ ಎರಡು ಸಂದರ್ಭಗಳಲ್ಲೂ ಆ ಗಂಡನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು. ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ, ಅವನು ಯಾಜಕನಿಗೆ ಮೂರು ಸೇರು ಜವೆಗೋದಿ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಪಾಪವನ್ನು ಹೊರಪಡಿಸುವುದಕ್ಕೂ, ಸರ್ವೇಶ್ವರನಿಗೆ ನೈವೇದ್ಯವಾದ ಕಾಣಿಕೆ. ಆದ್ದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹುಯ್ಯಬಾರದು, ಸಾಂಬ್ರಾಣಿಯನ್ನು ಹಾಕಬಾರದು.</verse>
				<verse number="16">“ಯಾಜಕನು ಅವಳನ್ನು ಕರೆದು ಸರ್ವೇಶ್ವರನ ಸಮ್ಮುಖದಲ್ಲಿ ನಿಲ್ಲಿಸಬೇಕು.</verse>
				<verse number="17">ಒಂದು ಮಣ್ಣಿನ ಪಾತ್ರೆಯಲ್ಲಿ ಪರಿಶುದ್ಧ ಜಲವನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ನೆಲದಿಂದ ಸ್ವಲ್ಪ ಧೂಳನ್ನು ಆ ನೀರಿನಲ್ಲಿ ಹಾಕಬೇಕು.</verse>
				<verse number="18">ಯಾಜಕನು ಆಕೆಯನ್ನು ಸರ್ವೇಶ್ವರನ ಸಮ್ಮುಖದಲ್ಲಿ ನಿಲ್ಲಿಸಿ, ಅವಳ ತಲೆಕೂದಲನ್ನು ಕೆದರಿಸಿ, ವ್ಯಭಿಚಾರದ ಸಂಶಯವನ್ನು ಸೂಚಿಸುವ ಆ ನೈವೇದ್ಯದ ಹಿಟ್ಟನ್ನು ಅವಳ ಕೈಯಲ್ಲಿಡಬೇಕು; ಶಾಪವನ್ನು ತರುವ ವಿಷಕರವಾದ ನೀರನ್ನು ತನ್ನ ಕೈಯಲ್ಲೇ ಹಿಡಿದುಕೊಳ್ಳಬೇಕು.</verse>
				<verse number="19">ಅದೇ ಯಾಜಕನು ಅವಳಿಂದ ಶಪಥಪೂರ್ವಕ ಪ್ರಮಾಣ ಮಾಡಿಸುತ್ತಾ ಅವಳಿಗೆ - “ನೀನು ನಿನ್ನ ಗಂಡನ ಅಧೀನದಲ್ಲಿದ್ದು ಪಾತಿವ್ರತ್ಯವನ್ನು ಬಿಡದೆ, ಪರಪುರುಷನನ್ನು ಕೂಡದೆ, ಅಶುದ್ಧಳಾಗದೆ ಇರುವವಳಾದರೆ ಶಾಪ ತರುವ ಈ ವಿಷಕರವಾದ ನೀರಿನಿಂದ ನಿನಗೆ ಹಾನಿಯಾಗದು.</verse>
				<verse number="20">ಆದರೆ ನೀನು ಗಂಡಸಿದ್ದವಳಾಗಿ ಪರಪುರುಷನನ್ನು ಕೂಡಿ ಕೆಟ್ಟಿದ್ದರೆ ನಿನ್ನ ಗಂಡನಲ್ಲದೆ ಬೇರೊಬ್ಬನು ನಿನ್ನನ್ನು ಸಂಗಮಿಸಿದ್ದರೆ,</verse>
				<verse number="21">ಸರ್ವೇಶ್ವರನು ನಿನ್ನ ಜನನೇಂದ್ರಿಯಗಳು ಬತ್ತಿಹೋಗುವಂತೆ, ನಿನ್ನ ಹೊಟ್ಟೆ ಉಬ್ಬುವಂತೆ ಮಾಡಿ, ನೀನು ನಿನ್ನ ಜನರ ಮಧ್ಯೆ ಶಾಪಗ್ರಸ್ತಳನ್ನಾಗಿ ಮಾಡಲಿ.</verse>
				<verse number="22">ಶಾಪತರುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆ ಉಬ್ಬುವಂತೆ, ಜನನೇಂದ್ರಿಯಗಳು ಬತ್ತಿಹೋಗುವಂತೆ ಮಾಡಲಿ,” ಎಂದು ಹೇಳಬೇಕು. ಅದಕ್ಕೆ ಆ ಹೆಂಗಸು, “ಆಗಲಿ, ಹಾಗೆಯೇ ಆಗಲಿ,” ಎಂದು ಹೇಳಬೇಕು.</verse>
				<verse number="23">“ಬಳಿಕ ಯಾಜಕನು ಆ ಶಾಪವಚನಗಳನ್ನು ಒಂದು ಪತ್ರದಲ್ಲಿ ಬರೆದು ಆ ವಿಷಕರ ಜಲದಲ್ಲಿ ತೊಳೆಯಲಿ;</verse>
				<verse number="24">ಶಾಪತರುವ ಆ ನೀರನ್ನು ಆಕೆಗೆ ಕುಡಿಸಲಿ; ಆ ನೀರು ಅವಳೊಳಗೆ ಸೇರಿ ವಿಷಕರವಾಗುವುದು.</verse>
				<verse number="25">ಆಮೇಲೆ ವ್ಯಭಿಚಾರ ಸಂಶಯ ಸೂಚಕವಾದ ಆ ಹಿಟ್ಟನ್ನು ಅವಳ ಕೈಯಿಂದ ತೆಗೆದುಕೊಂಡ ಯಾಜಕನು ಬಲಿಪೀಠದ ಹತ್ತಿರಕ್ಕೆ ಬರಬೇಕು.</verse>
				<verse number="26">ನೈವೇದ್ಯವಾದುದನ್ನು ಸೂಚಿಸುವುದಕ್ಕಾಗಿ ಆ ಹಿಟ್ಟಿನಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಅವನು ಹೋಮಮಾಡಬೇಕು. ಕೊನೆಗೆ ಯಾಜಕನು ಆ ನೀರನ್ನು ಆಕೆಗೆ ಕುಡಿಸಬೇಕು.</verse>
				<verse number="27">ಅವಳು ದೋಷಿಯಾಗಿ ಗಂಡನಿಗೆ ದ್ರೋಹವೆಸಗಿದ್ದರೆ ಕುಡಿದ ಶಾಪಕರವಾದ ಆ ನೀರು ಅವಳೊಳಗೆ ಸೇರಿ ವಿಷವಾಗುವುದು. ಈ ಕಾರಣ ಅವಳ ಹೊಟ್ಟೆ ಉಬ್ಬುವುದು. ಅವಳ ಜನನೇಂದ್ರಿಯಗಳು ಬತ್ತಿಹೋಗುವುವು. ಆಕೆ ತನ್ನ ಜನರ ಮಧ್ಯೆ ಶಾಪಗ್ರಸ್ತಳಾಗುವಳು.</verse>
				<verse number="28">ಆದರೆ ಆಕೆ ದುಷ್ಟಳಾಗಿರದೆ, ನಿರಪರಾಧಿಯಾಗಿದ್ದ ಪಕ್ಷಕ್ಕೆ ಅವಳಿಗೆ ಯಾವ ಹಾನಿಯೂ ಸಂಭವಿಸದೆ ಗರ್ಭವತಿಯಾಗುವಳು.</verse>
				<verse number="29">ವ್ಯಭಿಚಾರ ಸಂಶಯವನ್ನು ಪರಿಹರಿಸುವ ವಿಧಿ ಇದುವೆ. ಹೆಂಡತಿಯಾದವಳು ಗಂಡನ ಸ್ವಾಧೀನದಲ್ಲಿದ್ದರೂ ಪಾತಿವ್ರತ್ಯವನ್ನು ತೊರೆದು ಜಾರತ್ವ ಮಾಡಿರುವಾಗ</verse>
				<verse number="30">ಅಥವಾ ಗಂಡನು ಹೆಂಡತಿಯ ವಿಷಯದಲ್ಲಿ ಸಂಶಯಪಡುವಾಗ ಅವನು ಅವಳನ್ನು ಸರ್ವೇಶ್ವರನ ಸಮ್ಮುಖದಲ್ಲಿ ತಂದು ನಿಲ್ಲಿಸಬೇಕು. ಯಾಜಕನು ಅವಳ ವಿಷಯದಲ್ಲಿ ಈ ವಿಧಿ ನಿಯಮವನ್ನು ನೆರವೇರಿಸಬೇಕು.</verse>
				<verse number="31">ಆಗ ಗಂಡನು ನಿರಪರಾಧಿಯಾಗುವನು. ಹೆಂಡತಿ ತನ್ನ ಅಕ್ರಮಕ್ಕೆ ತಕ್ಕ ಶಿಕ್ಷೆಯನ್ನು ಅನುಭವಿಸುವಳು.</verse>
			</chapter>
			<chapter number="6">
				<verse number="1">ಸರ್ವೇಶ್ವರ ಸ್ವಾಮಿ, ಮೋಶೆಗೆ ಹೀಗೆಂದರು:</verse>
				<verse number="2">“ನೀನು ಇಸ್ರಯೇಲರಿಗೆ ಆಜ್ಞಾಪಿಸಬೇಕಾದುದು ಇದು - ಯಾವ ಗಂಡಸೇ ಆಗಲಿ, ಹೆಂಗಸೇ ಆಗಲಿ ನಾಜೀರರ ವ್ರತವನ್ನು ಅಂದರೆ ಸರ್ವೇಶ್ವರನಿಗೆ ತನ್ನನ್ನೇ ಪ್ರತಿಷ್ಠಿಸಿಕೊಳ್ಳುವ ವಿಶೇಷ ವ್ರತವನ್ನು ಕೈಗೊಂಡಾಗ</verse>
				<verse number="3">ದ್ರಾಕ್ಷಾರಸವನ್ನು ಹಾಗೂ ಮದ್ಯಪಾನವನ್ನು ಮುಟ್ಟಬಾರದು; ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯದ ಹುಳಿಯನ್ನಾಗಲಿ ಕುಡಿಯಬಾರದು. ದ್ರಾಕ್ಷಿಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು; ಹಸಿ ಅಥವಾ ಒಣಗಿದ ದ್ರಾಕ್ಷಿಹಣ್ಣನ್ನು ತಿನ್ನಬಾರದು.</verse>
				<verse number="4">ಅಂಥವನು ವ್ರತ ಕೈಗೊಂಡು ತನ್ನನ್ನೇ ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ದ್ರಾಕ್ಷಾಬಳ್ಳಿಯಿಂದ ಉತ್ಪನ್ನವಾದ ಹೀಚನ್ನಾಗಲಿ, ಸಿಪ್ಪೆಯನ್ನಾಗಲಿ ತಿನ್ನಬಾರದು.</verse>
				<verse number="5">ಅವನು ತನ್ನ ವ್ರತ ದಿನಗಳಲ್ಲೆಲ್ಲಾ ಕ್ಷೌರ ಮಾಡಿಸಿಕೊಳ್ಳಬಾರದು. ತನ್ನನ್ನೇ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ವ್ರತಬದ್ಧನಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬೆಳೆಯಬಿಡಬೇಕು.</verse>
				<verse number="6">ತನ್ನನ್ನೇ ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ಯಾವ ಶವವನ್ನು ಮುಟ್ಟಬಾರದು.</verse>
				<verse number="7">ತಾಯಿತಂದೆ, ಅಣ್ಣತಮ್ಮ, ಅಕ್ಕತಂಗಿ ಇವರಲ್ಲಿ ಯಾರು ಸತ್ತರೂ ಅವರ ನಿಮಿತ್ತ ಕೈಗೊಂಡ ವ್ರತ ಅವನ ತಲೆಯ ಮೇಲಿದೆ;</verse>
				<verse number="8">ತಾನು ಪ್ರತಿಸ್ಠಿಸಿಕೊಂಡಿರುವ ದಿನಗಳಲ್ಲೆಲ್ಲಾ ಅವನು ಸರ್ವೇಶ್ವರನಿಗೆ ಮೀಸಲಾಗಿಯೇ ಇರಬೇಕು.</verse>
				<verse number="9">ಆಕಸ್ಮಿಕವಾಗಿ ಯಾರಾದರೂ ಅವನ ಬಳಿಯಲ್ಲೇ ಸತ್ತು, ಅವನು ಪ್ರತಿಷ್ಠಿಸಿಕೊಂಡಿದ್ದ ತಲೆಕೂದಲು ಅಪವಿತ್ರವಾದರೆ ಏಳನೆಯ ದಿನದಂದು ಅಂದರೆ ಶುದ್ಧೀಕರಣ ದಿನದಂದು ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು.</verse>
				<verse number="10">ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ತಂದು ಯಾಜಕನಿಗೆ ಕೊಡಬೇಕು.</verse>
				<verse number="11">ಯಾಜಕನು ದೋಷಪರಿಹಾರ ಬಲಿಯನ್ನಾಗಿ ಒಂದನ್ನೂ ಸಂಪೂರ್ಣ ದಹನ ಬಲಿಯನ್ನಾಗಿ ಇನ್ನೊಂದನ್ನೂ ಸಮರ್ಪಿಸಲಿ. ಹೀಗೆ ಶವಸೋಂಕಿದವನಿಗಾಗಿ ದೋಷಪರಿಹಾರಮಾಡಿ ಅವನ ತಲೆಗೂದಲು ಅಂದಿನಿಂದ ಪವಿತ್ರವೆಂದು ನಿರ್ಣಯಿಸಲಿ.</verse>
				<verse number="12">ಅವನು ಎಷ್ಠು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದನೋ ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಸರ್ವೇಶ್ವರನಿಗೆ ಪ್ರತಿಷ್ಠಿಸಿಕೊಳ್ಳಬೇಕು. ಅದಲ್ಲದೆ ಪ್ರಾಯಶ್ಚಿತ್ತ ಬಲಿಯಾಗಿ ಒಂದು ವರ್ಷದ ಕುರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ವ್ರತಕ್ಕೆ ವಿಘ್ನಪ್ರಾಪ್ತವಾದ್ದರಿಂದ ಕಳೆದುಹೋದ ದಿನಗಳು ವ್ಯರ್ಥವಾದುವೆಂದು ಪರಿಗಣಿಸಬೇಕು.</verse>
				<verse number="13">ನಾಜೀರ ವ್ರತಸ್ಥನು ತನ್ನ ವ್ರತಾವಧಿ ಮುಗಿದಾಗ ಈ ಕ್ರಮವನ್ನು ಅನುಸರಿಸಬೇಕು. ಅವನು ದೇವದರ್ಶನದ ಗುಡಾರದ ಬಾಗಿಲಿಗೆ ಬಂದು ಸರ್ವೇಶ್ವರನಿಗೆ ಈ ಕಾಣಿಕೆಗಳನ್ನು ಸಲ್ಲಿಸಬೇಕು;</verse>
				<verse number="14">ದಹನಬಲಿಗಾಗಿ ಕಳಂಕರಹಿತವಾದ ಒಂದು ವರ್ಷದ ಟಗರು, ಪಾಪಪರಿಹಾರ ಬಲಿಗಾಗಿ ಕಳಂಕರಹಿತವಾದ ಒಂದು ವರ್ಷದ ಕುರಿ, ಸಮಾಧಾನ ಬಲಿಗಾಗಿ ಕಳಂಕರಹಿತವಾದ ಒಂದು ಟಗರು.</verse>
				<verse number="15">ಇದಲ್ಲದೆ ಒಂದು ಬುಟ್ಟಿ ತುಂಬ ಎಣ್ಣೆಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆಹಾಕಿದ ಹುಳಿಯಿಲ್ಲದ ಕಡಬುಗಳು ಮತ್ತು ಮೇಲೆ ಹೇಳಿದ ಬಲಿಗಳ ಸಮೇತ ಕೊಡಬೇಕಾದ ಧಾನ್ಯದ್ರವ್ಯ-ಪಾನದ್ರವ್ಯಗಳು, ಇವುಗಳನ್ನೆಲ್ಲಾ ಸಮರ್ಪಿಸಬೇಕು.</verse>
				<verse number="16">ಯಾಜಕನು ಇವುಗಳನ್ನು ಸರ್ವೇಶ್ವರನ ಸನ್ನಿಧಿಗೆ ತಂದು ನಾಜೀರ ವ್ರತ ಪಾಪಪರಿಹಾರಕ ಬಲಿಯನ್ನೂ ದಹನಬಲಿಯನ್ನೂ ಸಮರ್ಪಿಸಬೇಕು.</verse>
				<verse number="17">ಅನಂತರ ಟಗರನ್ನೂ ಬುಟ್ಟಿ ತುಂಬಿರುವ ಹುಳಿಯಿಲ್ಲದ ರೊಟ್ಟಿಗಳನ್ನೂ ಸರ್ವೇಶ್ವರನಿಗೆ ಸಮಾಧಾನ ಯಜ್ಞವಾಗಿ ಸಮರ್ಪಿಸಬೇಕು. ತಂದ ಧಾನ್ಯದ್ರವ್ಯ - ಪಾನದ್ರವ್ಯಗಳನ್ನು ಯಾಜಕನು ನೈವೇದ್ಯ ಮಾಡಬೇಕು.</verse>
				<verse number="18">ಬಳಿಕ ನಾಜೀರ ವ್ರತಸ್ಥನು ತನ್ನ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಳ್ಳಬೇಕು. ಆ ಕೂದಲನ್ನು ಸಮಾಧಾನ ಬಲಿಯ ದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.</verse>
				<verse number="19">ತರುವಾಯ ಯಾಜಕನು ಆ ಟಗರಿನ ಬೆಂದ ಮುಂದೊಡೆಯನ್ನು ಬುಟ್ಟಿಯಲ್ಲಿನ ಹುಳಿಯಿಲ್ಲದ ಒಂದು ರೊಟ್ಟಿಯನ್ನು ಹಾಗೂ ಹುಳಿಯಿಲ್ಲದ ಒಂದು ಕಡುಬನ್ನು ತೆಗೆದುಕೊಂಡು ನಾಜೀರ ವ್ರತಸ್ಥನು ಕ್ಷೌರಮಾಡಿಸಿಕೊಂಡ ನಂತರ ಅವನ ಕೈಯಲ್ಲಿ ಇಡಬೇಕು; ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿ ಎತ್ತಬೇಕು.</verse>
				<verse number="20">ಇದು ನೈವೇದ್ಯವಾಗಿ ಆರತಿಯೆತ್ತುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಬೇಕು. ಇದಾದ ನಂತರ ನಾಜೀರ ವ್ರತಸ್ಥನು ದ್ರಾಕ್ಷಾರಸವನ್ನು ಪಾನಮಾಡಬಹುದು.</verse>
				<verse number="21">ಇದುವೇ ನಾಜೀರ ವ್ರತಸ್ಥರು ಅನುಸರಿಸಬೇಕಾದ ವಿಧಿ. ತಮ್ಮ ವ್ರತಪೂರ್ತಿಗಾಗಿ ಸರ್ವೇಶ್ವರನಿಗೆ ಅವರು ಸಮರ್ಪಿಸಬೇಕಾದ ಕಾಣಿಕೆ. ಅವರು ತಮ್ಮ ಶಕ್ತಿಗನುಸಾರ ಹೆಚ್ಚಾಗಿಯೂ ಕೊಡಬಹುದು. ಆದರೆ ತಾವು ಕೊಡುತ್ತೇವೆಂದು ಹರಕೆ ಮಾಡಿದಷ್ಟನ್ನು ವ್ರತ ವಿಧಿಗನುಸಾರ ಕೊಡಲೇಬೇಕು.</verse>
				<verse number="22">ಸರ್ವೇಶ್ವರ ಮೋಶೆಗೆ ಹೀಗೆಂದರು:</verse>
				<verse number="23">”ನೀನು ಆರೋನನಿಗೂ ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು: ‘ನೀವು ಇಸ್ರಯೇಲರನ್ನು ಆಶೀರ್ವದಿಸುವಾಗ ಈ ಪ್ರಕಾರ ಹೇಳಬೇಕು -</verse>
				<verse number="24">ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ!</verse>
				<verse number="25">ಸರ್ವೇಶ್ವರ ಪ್ರಸನ್ನ ಮುಖದಿಂದ ನಿಮ್ಮನ್ನು ನೋಡಿ ನಿಮಗೆ ದಯೆ ತೋರಲಿ!</verse>
				<verse number="26">ಸರ್ವೇಶ್ವರ ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ!</verse>
				<verse number="27">ಹೀಗೆ ಅವರು ಇಸ್ರಯೇಲರ ಮೇಲೆ ನನ್ನ ಹೆಸರನ್ನು ಉಚ್ಛರಿಸುವಾಗ ನಾನು ಅವರನ್ನು ಆಶೀರ್ವದಿಸುವೆನು.”</verse>
			</chapter>
			<chapter number="7">
				<verse number="1">ಮೋಶೆ ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ಮೇಲೆ ಅದನ್ನೂ ಅದರ ಸಾಮಾನುಗಳನ್ನೂ ಹಾಗೂ ಬಲಿಪೀಠವನ್ನು ಅದರ ಉಪಕರಣಗಳನ್ನೂ ಅಭಿಷೇಕಿಸಿ ಪ್ರತಿಷ್ಠಿಸಿದನು.</verse>
				<verse number="2">ಆಗ ಇಸ್ರಯೇಲರ ಮುಖ್ಯಸ್ಥರು, ಅಂದರೆ ಗೋತ್ರನಾಯಕರು ಹಾಗೂ ಕುಲಾಧಿಪತಿಗಳಾಗಿದ್ದು ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು, ಕಾಣಿಕೆಗಳನ್ನು ತಂದೊಪ್ಪಿಸಿದರು.</verse>
				<verse number="3">ಇಬ್ಬರಿಬ್ಬರು ಒಂದು ಕಮಾನು ಬಂಡಿಯನ್ನೂ ಒಂದು ಜೊತೆ ಎತ್ತುಗಳನ್ನೂ ಅಂತು ಆರು ಬಂಡಿಗಳನ್ನೂ ಆರು ಜೊತೆ ಎತ್ತುಗಳನ್ನೂ ದೇವದರ್ಶನದ ಗುಡಾರದ ಮುಂದೆ ಸರ್ವೇಶ್ವರನ ಸನ್ನಿಧಿಗೆ ತಂದು ಅರ್ಪಿಸಿದರು.</verse>
				<verse number="4">ಸರ್ವೇಶ್ವರ ಸ್ವಾಮಿ ಮೋಶೆಗೆ,</verse>
				<verse number="5">“ಈ ಕಾಣಿಕೆಯ ವಸ್ತುಗಳನ್ನು ಇವರ ಕೈಯಿಂದ ತೆಗೆದುಕೋ; ಇವು ದೇವದರ್ಶನದ ಗುಡಾರದ ಸೇವೆಗೆ ಉಪಯೋಗವಾಗಲಿ. ಲೇವಿಯರಿಗೆ ಅವರವರ ಕೆಲಸಕ್ಕೆ ತಕ್ಕ ಹಾಗೆ ಅವುಗಳನ್ನು ಕೊಡು,” ಎಂದು ಆಜ್ಞಾಪಿಸಿದರು.</verse>
				<verse number="6">ಅಂತೆಯೇ, ಮೋಶೆ ಆ ಬಂಡಿಗಳನ್ನು ಹಾಗೂ ಎತ್ತುಗಳನ್ನು ತೆಗೆದುಕೊಂಡು ಲೇವಿಯರಿಗೆ ಕೊಟ್ಟನು.</verse>
				<verse number="7">ಎರಡು ಬಂಡಿಗಳನ್ನು ಹಾಗೂ ನಾಲ್ಕು ಎತ್ತುಗಳನ್ನು ಗೇರ್ಷೋನ್ಯರಿಗೆ</verse>
				<verse number="8">ನಾಲ್ಕು ಬಂಡಿ ಹಾಗೂ ಎಂಟು ಎತ್ತುಗಳನ್ನು ಮೆರಾರೀಯರಿಗೆ ಅವರವರ ಸೇವೆಗೆ ತಕ್ಕ ಹಾಗೆ ಕೊಟ್ಟನು. ಇವರು ಮಹಾಯಾಜಕ ಆರೋನನ ಮಗ ಈತಾಮಾರನ ಕೈಕೆಳಗೆ ಸೇವೆ ಮಾಡಬೇಕಾಗಿತ್ತು.</verse>
				<verse number="9">ಕೆಹಾತ್ಯರಿಗೆ ಮಾತ್ರ ಏನನ್ನೂ ಕೊಡಲಿಲ್ಲ. ಏಕೆಂದರೆ ದೇವದರ್ಶನದ ಗುಡಾರದ ಸಾಮಾನುಗಳನ್ನು ಸಾಗಿಸುವುದೇ ಅವರಿಗೆ ನೇಮಕವಾದ ಕೆಲಸವಾಗಿತ್ತು. ಅವರು ಅವುಗಳನ್ನು ಹೆಗಲ ಮೇಲೆ ಹೊರಬೇಕಾಗಿತ್ತು.</verse>
				<verse number="10">ಬಲಿಪೀಠವನ್ನು ಅಭಿಷೇಕಿಸಿದ ದಿನದಂದು ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಕಾಣಿಕೆಗಳನ್ನು ತಂದು ಅದರ ಮುಂದೆ ಇಟ್ಟರು.</verse>
				<verse number="11">ಆಗ ಸರ್ವೇಶ್ವರ ಮೋಶೆಗೆ, “ಒಬ್ಬೊಬ್ಬ ಕುಲಾಧಿಪತಿ ಒಂದೊಂದು ದಿನ ಬಲಿಪೀಠದ ಪ್ರತಿಷ್ಠೆಗಾಗಿ ತನ್ನ ಕಾಣಿಕೆಯನ್ನು ಸಮರ್ಪಿಸಲಿ,” ಎಂದು ಆಜ್ಞಾಪಿಸಿದನು.</verse>
				<verse number="12">ಮೊದಲನೆಯ ದಿನ ಕಾಣಿಕೆ ತಂದೊಪ್ಪಿಸಿದವನು ಯೆಹೂದ ಕುಲಾಧಿಪತಿ ಅಮ್ಮೀನಾದಾಬನ ಮಗ ನಹಶೋನ.</verse>
				<verse number="13">ಅವನು ತಂದ ಕಾಣಿಕೆಗಳು: ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಬೆಳ್ಳಿಯ ಒಂದು ಹರಿವಾಣ; 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು</verse>
				<verse number="14">ಧೂಪ ದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ.</verse>
				<verse number="15">ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ;</verse>
				<verse number="16">ಪಾಪಪರಿಹಾರಕ ಬಲಿಗಾಗಿ ಒಂದು ಹೋತ;</verse>
				<verse number="17">ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಅಮ್ಮೀನಾದಾಬನ ಮಗ ನಹಶೋನನು ಸಮರ್ಪಿಸಿದ ಕಾಣಿಕೆಗಳು ಇವೇ.</verse>
				<verse number="18">ಎರಡನೆಯ ದಿನ ಇಸ್ಸಾಕಾರ್ ಕುಲಾಧಿಪತಿ ಚೂವಾರನ ಮಗ ನೆತನೇಲನು ತಂದ ಕಾಣಿಕೆಗಳು:</verse>
				<verse number="19">ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ; 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು</verse>
				<verse number="20">ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ</verse>
				<verse number="21">ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ</verse>
				<verse number="22">ಪಾಪಪರಿಹಾರಕ ಬಲಿಗಾಗಿ ಒಂದು ಹೋತ;</verse>
				<verse number="23">ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಚೂವಾರನ ಮಗ ನೆತನೇಲನು ಕೊಟ್ಟ ಕಾಣಿಕೆಗಳು.</verse>
				<verse number="24">ಮೂರನೆಯ ದಿನ ಜೆಬುಲೂನ್ ಕುಲಾಧಿಪತಿ ಹೇಲೋನನ ಮಗ ಎಲೀಯಾಬನು ತಂದ ಕಾಣಿಕೆಗಳು:</verse>
				<verse number="25">ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು</verse>
				<verse number="26">ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ</verse>
				<verse number="27">ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದಕುರಿ,</verse>
				<verse number="28">ಪಾಪಪರಿಹಾರಕ ಬಲಿಗಾಗಿ ಒಂದು ಹೋತ;</verse>
				<verse number="29">ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಹೇಲೋನನ ಮಗ ಎಲೀಯಾಬನು ಸಮರ್ಪಿಸಿದ ಕಾಣಿಕೆಗಳು.</verse>
				<verse number="30">ನಾಲ್ಕನೆಯ ದಿನ ರೂಬೇನ್ ಕುಲಾಧಿಪತಿ ಶೆದೇಯೂರನ ಮಗ ಎಲೀಚೂರನು ತಂದ ಕಾಣಿಕೆಗಳು:</verse>
				<verse number="31">ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು</verse>
				<verse number="32">ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ</verse>
				<verse number="33">ದಹನ ಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,</verse>
				<verse number="34">ಪಾಪ ಪರಿಹಾರಕ ಬಲಿಗಾಗಿ ಒಂದು ಹೋತ,</verse>
				<verse number="35">ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು, ಶೆದೇಯೂರನ ಮಗ ಎಲೀಚೂರನು ಸಮರ್ಪಿಸಿದ ಕಾಣಿಕೆಗಳು ಇವೇ.</verse>
				<verse number="36">ಐದನೆಯ ದಿನ ಸಿಮೆಯೋನ್ ಕುಲಾಧಿಪತಿ ಚೂರಿಷದ್ದೈಯನ ಮಗ ಶೆಲುಮೀಯೇಲನು ತಂದ ಕಾಣಿಕೆಗಳು:</verse>
				<verse number="37">ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು.</verse>
				<verse number="38">ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ</verse>
				<verse number="39">ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,</verse>
				<verse number="40">ಪಾಪ ಪರಿಹಾರಕ ಬಲಿಗಾಗಿ ಒಂದು ಹೋತ;</verse>
				<verse number="41">ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಚೂರೀಷದ್ದೈಯನ ಮಗ ಶೆಲುಮೀಯೇಲನು ಸಮರ್ಪಿಸಿದ ಕಾಣಿಕೆಗಳು.</verse>
				<verse number="42">ಆರನೆಯ ದಿನ ಗಾದ್ ಕುಲಾಧಿಪತಿ ದೆಗೂವೇಲನ ಮಗ ಎಲ್ಯಾಸಾಫನು ತಂದ ಕಾಣಿಕೆಗಳು:</verse>
				<verse number="43">ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು</verse>
				<verse number="44">ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ</verse>
				<verse number="45">ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,</verse>
				<verse number="46">ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;</verse>
				<verse number="47">ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ದೆಗೂವೇಲನ ಮಗ ಎಲ್ಯಾಸಾಫನು ಸಮರ್ಪಿಸಿದ ಕಾಣಿಕೆಗಳು.</verse>
				<verse number="48">ಏಳನೆಯ ದಿನ ಎಫ್ರಾಯಿಮ್ ಕುಲಾಧಿಪತಿ ಅಮ್ಮೂಹೂದನ ಮಗ ಎಲೀಷಾವನು ತಂದ ಕಾಣಿಕೆಗಳು:</verse>
				<verse number="49">ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು</verse>
				<verse number="50">ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ</verse>
				<verse number="51">ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,</verse>
				<verse number="52">ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;</verse>
				<verse number="53">ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಅಮ್ಮೀಹೂದನ ಮಗ ಎಲೀಷಾವನು ಸಮರ್ಪಿಸಿದ ಕಾಣಿಕೆಗಳು ಇವೇ.</verse>
				<verse number="54">ಎಂಟನೆಯ ದಿನ ಮನಸ್ಸೆ ಕುಲಾಧಿಪತಿ ಪೆದಾಚೂರನ ಮಗ ಗಮ್ಲೀಯೇಲನು ತಂದ ಕಾಣಿಕೆಗಳು:</verse>
				<verse number="55">ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು</verse>
				<verse number="56">ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ</verse>
				<verse number="57">ಸರ್ವಾಂಗ ಹೋಮಕ್ಕಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,</verse>
				<verse number="58">ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;</verse>
				<verse number="59">ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಪೆದಾಚೂರನ ಮಗ ಗಮ್ಲೀಯೇಲನು ಸಮರ್ಪಿಸಿದ ಕಾಣಿಕೆಗಳು ಇವೇ.</verse>
				<verse number="60">ಒಂಬತ್ತನೆಯ ದಿನ ಬೆನ್ಯಾಮಿನ್ ಕುಲಾಧಿಪತಿ ಗಿದ್ಯೋನಿಯ ಮಗ ಅಬೀದಾನನು ತಂದ ಕಾಣಿಕೆಗಳು:</verse>
				<verse number="61">ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು</verse>
				<verse number="62">ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ</verse>
				<verse number="63">ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,</verse>
				<verse number="64">ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;</verse>
				<verse number="65">ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಗಿದ್ಯೋನಿಯ ಮಗ ಅಬೀದಾನನು ಸಮರ್ಪಿಸಿದ ಕಾಣಿಕೆಗಳು.</verse>
				<verse number="66">ಹತ್ತನೆಯ ದಿನ ದಾನ್ ಕುಲಾಧಿಪತಿ ಅಮ್ಮೀಷದ್ದೈಯನ ಮಗ ಅಹೀಗೆಜೆರನು ತಂದ ಕಾಣಿಕೆಗಳು:</verse>
				<verse number="67">ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು</verse>
				<verse number="68">ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ</verse>
				<verse number="69">ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,</verse>
				<verse number="70">ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;</verse>
				<verse number="71">ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಅಮ್ಮೀಷದ್ದೈಯನ ಮಗ ಅಹೀಗೆಜೆರನು ಸಮರ್ಪಿಸಿದ ಕಾಣಿಕೆಗಳು ಇವೇ.</verse>
				<verse number="72">ಹನ್ನೊಂದನೆಯ ದಿನ ಆಶೇರ್ ಕುಲಾಧಿಪತಿ ಒಕ್ರಾನನ ಮಗ ಪಗೀಯೇಲನು ತಂದ ಕಾಣಿಕೆಗಳು:</verse>
				<verse number="73">ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು</verse>
				<verse number="74">ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ</verse>
				<verse number="75">ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,</verse>
				<verse number="76">ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;</verse>
				<verse number="77">ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಒಕ್ರಾನನ ಮಗ ಪಗೀಯೇಲನು ಸಮರ್ಪಿಸಿದ ಕಾಣಿಕೆಗಳು.</verse>
				<verse number="78">ಹನ್ನೆರಡನೆಯ ದಿನ ನಫ್ತಾಲಿ ಕುಲಾಧಿಪತಿ ಏನಾನನ ಮಗ ಅಹೀರನು ತಂದ ಕಾಣಿಕೆಗಳು:</verse>
				<verse number="79">ದೇವಸ್ಥಾನದ ನಾಣ್ಯತೂಕದ ಮೇರೆಗೆ 130 ಶೆಕೆಲ್ ತೂಕದ ಒಂದು ಹರಿವಾಣ, 70 ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರ ತುಂಬ ನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಯ ಹಿಟ್ಟು</verse>
				<verse number="80">ಧೂಪದ್ರವ್ಯ ತುಂಬಿದ್ದ ಹತ್ತು ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ</verse>
				<verse number="81">ದಹನಬಲಿಗಾಗಿ ಒಂದು ಹೋರಿ, ಒಂದು ಟಗರು, ಒಂದು ವರ್ಷದ ಕುರಿ,</verse>
				<verse number="82">ಪಾಪ ಪರಿಕಾರಕ ಬಲಿಗಾಗಿ ಒಂದು ಹೋತ;</verse>
				<verse number="83">ಸಮಾಧಾನ ಬಲಿಗಾಗಿ ಎರಡು ಹೋರಿಗಳು, ಐದು ಟಗರುಗಳು, ಐದು ಹೋತಗಳು ಮತ್ತು ವರ್ಷದ ಐದು ಕುರಿಗಳು. ಇವೇ ಏನಾನನ ಮಗ ಅಹೀರನು ಸಮರ್ಪಿಸಿದ ಕಾಣಿಕೆಗಳು.</verse>
				<verse number="84">ಬಲಿಪೀಠವನ್ನು ಅಭಿಷೇಕಿಸಲಾದ ದಿನದಂದು ಇಸ್ರಯೇಲರ ಕುಲಾಧಿಪತಿಗಳು ಅದರ ಪ್ರತಿಷ್ಠೆಗಾಗಿ ಸಮರ್ಪಿಸಿದ ಕಾಣಿಕೆಗಳು ಒಟ್ಟು: 12 ಬೆಳ್ಳಿಯ ಹರಿವಾಣಗಳು; 12 ಬೆಳ್ಳಿಯ ಬಟ್ಟಲುಗಳು; 12 ಚಿನ್ನದ ಧೂಪಾರತಿಗಳು;</verse>
				<verse number="85">ಒಂದೊಂದು ಬೆಳ್ಳಿಯ ಹರಿವಾಣ 130 ಶೆಕೆಲ್ ತೂಕವುಳ್ಳದ್ದಾಗಿತ್ತು; ಒಂದೊಂದು ಬೆಳ್ಳಿಯ ಬಟ್ಟಲು 70 ಶೆಕೆಲ್ ತೂಕವುಳ್ಳದ್ದಾಗಿತ್ತು; ಆ ಬೆಳ್ಳಿಯ ಪಾತ್ರೆಗಳ ಒಟ್ಟು ತೂಕ ದೇವಸ್ಥಾನದ ನಾಣ್ಯದ ತೂಕದ ಮೇರೆಗೆ 2400 ಶೆಕೆಲ್ ತೂಕ.</verse>
				<verse number="86">ಧೂಫದ್ರವ್ಯ ತುಂಬಿದ್ದ ಚಿನ್ನದ ಧೂಪಾರತಿಗಳು ಹನ್ನೆರಡು; ದೇವಸ್ಥಾನದ ನಾಣ್ಯದ ಪ್ರಕಾರ ಒಂದೊಂದರ ತೂಕ 10 ಶೆಕೆಲ್. ಹೀಗೆ ಸರ್ವೇಶ್ವರ ಸ್ವಾಮಿ ಆತನೊಡನೆ ಮಾತಾಡಿದರು.</verse>
			</chapter>
			<chapter number="8">
				<verse number="1">ಸರ್ವೇಶ್ವರ ಸ್ವಾಮಿ ಮೋಶೆಗೆ:</verse>
				<verse number="2">“ಆರೋನನು ದೇವಸ್ಥಾನದ ದೀಪಗಳನ್ನು ಹಚ್ಚುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಿಗಿರುವ ಸ್ಥಳಕ್ಕೆ ಬೆಳಕು ಕೊಡುವಂತೆ ನೋಡಿಕೊಳ್ಳಬೇಕೆಂದು ಅವನಿಗೆ ಆಜ್ಞಾಪಿಸು” ಎಂದು ಹೇಳಿದರು.</verse>
				<verse number="3">ಅಂತೆಯೇ ಆ ದೀಪಗಳನ್ನು ಕ್ರಮವಾಗಿ ಇಟ್ಟನು.</verse>
				<verse number="4">ಆ ದೀಪಸ್ತಂಭದ ಬುಡಭಾಗವೂ ಅದರ ಪುಷ್ಪಾಲಂಕಾರಗಳೂ ಚಿನ್ನದ ನಕಾಸಿ ಕೆಲಸದಿಂದ ಮಾಡಲ್ಪಟ್ಟಿದ್ದವು. ಸರ್ವೇಶ್ವರ ತೋರಿಸಿದ್ದ ಮಾದರಿಯಂತೆ ಮೋಶೆ ಅದನ್ನು ಮಾಡಿಸಿದ್ದನು.</verse>
				<verse number="5">ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದ್ದೇನೆಂದರೆ:</verse>
				<verse number="6">“ನೀನು ಲೇವಿಯರನ್ನು ಇಸ್ರಯೇಲರಿಂದ ಪ್ರತ್ಯೇಕಿಸಿ ಶುದ್ಧೀಕರಿಸು.</verse>
				<verse number="7">ಅವರನ್ನು ಶುದ್ಧೀಕರಿಸುವ ವಿಧಾನ ಇದು: ಅವರ ಮೇಲೆ ಪಾಪ ಪರಿಹಾರಕ ಜಲವನ್ನು ಚಿಮುಕಿಸು. ಅವರು ಕ್ಷೌರ ಮಾಡಿಸಿಕೊಂಡು, ತಮ್ಮ ಬಟ್ಟೆಗಳನ್ನು ಒಗೆದುಕೊಂಡು ತಮ್ಮನ್ನು ಶುದ್ಧಮಾಡಿಕೊಳ್ಳಲಿ.</verse>
				<verse number="8">ಬಳಿಕ ಅವರು ದಹನಬಲಿಗಾಗಿ ಒಂದು ಹೋರಿಯನ್ನೂ ಅದರೊಡನೆ ಸಮರ್ಪಿಸಬೇಕಾದ ಧಾನ್ಯನೈವೇದ್ಯವನ್ನೂ, ಅಂದರೆ ಎಣ್ಣೆಬೆರೆಸಿದ ಗೋದಿಯ ಹಿಟ್ಟನ್ನೂ ಮತ್ತು ಪಾಪಪರಿಹಾರಕ ಬಲಿಗಾಗಿ ಮತ್ತೊಂದು ಹೋರಿಯನ್ನೂ ತೆಗೆದುಕೊಳ್ಳಲಿ.</verse>
				<verse number="9">ಆಗ ನೀನು ಅವರನ್ನು ದೇವದರ್ಶನದ ಗುಡಾರದ ಮುಂದಕ್ಕೆ ಕರೆದುಕೊಂಡು ಬಾ. ಇಸ್ರಯೇಲ್ ಜನರನ್ನು ಸಭೆಸೇರಿಸು.</verse>
				<verse number="10">ಲೇವಿಯರನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ನಿಲ್ಲಿಸು. ಇಸ್ರಯೇಲರು ಅವರ ಮೇಲೆ ತಮ್ಮ ಕೈಗಳನ್ನು ಇಡಲಿ.</verse>
				<verse number="11">ಲೇವಿಯರು ಇಸ್ರಯೇಲರ ಪರವಾಗಿ ಸರ್ವೇಶ್ವರನ ಪರಿಚರ್ಯ ಮಾಡಲು ಯೋಗ್ಯರಾಗುವಂತೆ ಆರೋನನು ಅವರನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ನೈವೇದ್ಯದಂತೆ ಸಮರ್ಪಿಸಲಿ.</verse>
				<verse number="12">ಲೇವಿಯರು ಆ ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ನೀನು ಸರ್ವೇಶ್ವರನಿಗೆ ಪಾಪಪರಿಹಾರಕ ಬಲಿಗಾಗಿ ಒಂದು ಹೋರಿಯನ್ನು, ಹಾಗು ದಹನಬಲಿಗಾಗಿ ಮತ್ತೊಂದು ಹೋರಿಯನ್ನು ಸಮರ್ಪಿಸಿ ಅವರಿಗಾಗಿ ಪಾಪಪರಿಹಾರವನ್ನು ಮಾಡು.</verse>
				<verse number="13">“ನೀನು ಆರೋನನ ಮತ್ತು ಅವನ ಮಕ್ಕಳ ಮುಂದೆ ಲೇವಿಯರನ್ನು ನಿಲ್ಲಿಸಿ ಅವರನ್ನು ನೈವೇದ್ಯದಂತೆ ಸರ್ವೇಶ್ವರನಿಗೆ ಸಮರ್ಪಿಸು.</verse>
				<verse number="14">ಹೀಗೆ ಲೇವಿಯರನ್ನು ಇಸ್ರಯೇಲರಿಂದ ಪ್ರತ್ಯೇಕಿಸಿದಾಗ ಅವರು ನನ್ನ ಸೊತ್ತಾಗುವರು.</verse>
				<verse number="15">ನೀನು ಅವರನ್ನು ಶುದ್ಧೀಕರಿಸಿ ನೈವೇದ್ಯದಂತೆ ಸಮರ್ಪಿಸಿದ ನಂತರ ಅವರು ದೇವದರ್ಶನದ ಗುಡಾರದ ಪರಿಚರ್ಯೆಯನ್ನು ಮಾಡಲಿ.</verse>
				<verse number="16">ಇಸ್ರಯೇಲರಲ್ಲಿ ಇವರೇ ನನಗೆ ಸಂಪೂರ್ಣವಾಗಿ ಸಮರ್ಪಿತರು. ಚೊಚ್ಚಲು ಮಕ್ಕಳಿಗೆ ಬದಲಾಗಿ, ಅಂದರೆ ಇಸ್ರಯೇಲರ ಜೇಷ್ಠಪುತ್ರರಿಗೆ, ಬದಲಾಗಿ ನಾನು ಇವರನ್ನೇ ನನ್ನ ಸ್ವಂತಕ್ಕಾಗಿ ತೆಗೆದುಕೊಂಡಿದ್ದೇನೆ.</verse>
				<verse number="17">ಇಸ್ರಯೇಲರಲ್ಲಿ ಚೊಚ್ಚಲಾದ ಮನುಷ್ಯರೂ ಪಶುಪ್ರಾಣಿಗಳೆಲ್ಲವೂ ನನ್ನ ಸೊತ್ತೆಂಬುದೇನೋ ನಿಜ; ಈಜಿಪ್ಟ್ ದೇಶದಲ್ಲಿ ಚೊಚ್ಚಲಾದುದನ್ನೆಲ್ಲ ಸಂಹರಿಸಿದಾಗ ಇಸ್ರಯೇಲರಲ್ಲಿ ಚೊಚ್ಚಲಾದುದನ್ನು ನನ್ನ ಸ್ವಂತಕ್ಕಾಗಿ ಪ್ರತಿಷ್ಠಾಪಿಸಿಕೊಂಡೆ.</verse>
				<verse number="18">ಈಗ ಇಸ್ರಯೇಲರ ಚೊಚ್ಚಲು ಮಕ್ಕಳಿಗೆ ಬದಲಾಗಿ ಲೇವಿಯರನ್ನು ತೆಗೆದುಕೊಂಡಿದ್ದೇನೆ.</verse>
				<verse number="19">ಇಸ್ರಯೇಲರ ಪರವಾಗಿ ದೇವದರ್ಶನದ ಗುಡಾರದ ಪರಿಚರ್ಯವನ್ನು ನಡೆಸುವುದಕ್ಕೂ ಪಾಪಪರಿಹಾರವನ್ನು ಮಾಡುವುದಕ್ಕೂ ಲೇವಿಯರನ್ನು ಆರಿಸಿಕೊಂಡು ಆರೋನನ ಮತ್ತು ಅವನ ಮಕ್ಕಳ ವಶಕ್ಕೆ ಕೊಟ್ಟಿದ್ದೇನೆ. ಆದುದರಿಂದ ಇಸ್ರಯೇಲರು ದೇವಸ್ಥಾನದ ಹತ್ತಿರಕ್ಕೆ ಬಂದಾಗ ಅವರಿಗೆ ಯಾವ ಅಪಾಯವು ಸಂಭವಿಸುವುದಿಲ್ಲ.”</verse>
				<verse number="20">ಸರ್ವೇಶ್ವರ ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆ, ಆರೋನನು ಹಾಗು ಇಸ್ರಯೇಲ್ ಜನರೆಲ್ಲರು ಮಾಡಿದರು.</verse>
				<verse number="21">ಲೇವಿಯರು ತಮ್ಮನ್ನು ಶುದ್ಧಮಾಡಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು. ಆರೋನನು ಅವರನ್ನು ನೈವೇದ್ಯದಂತೆ ಸರ್ವೇಶ್ವರನ ಸನ್ನಿಧಿಯಲ್ಲಿ ಸಮರ್ಪಿಸಿದನು. ಅವರನ್ನು ಶುದ್ಧೀಕರಿಸುವುದಕ್ಕಾಗಿ ಅವರಿಗೋಸ್ಕರ ಪಾಪಪರಿಹಾರವನ್ನು ಮಾಡಿದನು.</verse>
				<verse number="22">ಇದಾದ ಮೇಲೆ ಲೇವಿಯರು ತಮಗೆ ನೇಮಕವಾದ ಕೆಲಸವನ್ನು ದೇವದರ್ಶನದ ಗುಡಾರದಲ್ಲಿ ಆರೋನನ ಮತ್ತು ಅವನ ಮಕ್ಕಳ ಕೈಕೆಳಗೆ ನಡೆಸಲಾರಂಭಿಸಿದರು. ಅವರ ಬಗ್ಗೆ ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು.</verse>
				<verse number="23">ಇದಲ್ಲದೆ ಸರ್ವೇಶ್ವರ ಮೋಶೆಗೆ ಹೀಗೆಂದು ಆಜ್ಞಾಪಿಸಿದರು:</verse>
				<verse number="24">“ಲೇವಿಯರು ಅನುಸರಿಸಬೇಕಾದ ಪದ್ಧತಿ ಇದು - ಇಪ್ಪತ್ತು ವರ್ಷ ಮತ್ತು ಮೇಲ್ಪಟ್ಟ ವಯಸ್ಸಿನವರು ದೇವದರ್ಶನದ ಗುಡಾರದಲ್ಲಿ ಸೇವೆಮಾಡಲು ಸೇರಬೇಕು.</verse>
				<verse number="25">ಅವರು ಐವತ್ತು ವರ್ಷದವರಾದ ನಂತರ ಆ ಸೇವಾ ಸಂಸ್ಥೆಯನ್ನು ಬಿಟ್ಟು ದೇವಸ್ಥಾನದ ಪರಿಚರ್ಯದಿಂದ ನಿವೃತ್ತರಾಗಬೇಕು.</verse>
				<verse number="26">ಅಂಥವರು ತಮ್ಮ ಸ್ವಕುಲದವರ ಜೊತೆ ದೇವದರ್ಶನದ ಗುಡಾರವನ್ನು ಕಾಯುವ ಸೇವೆ ಮಾಡಬಹುದು. ಅದೊಂದನ್ನು ಬಿಟ್ಟು ಅವರಿಂದ ಬೇರೆ ಪರಿಚರ್ಯೆಯನ್ನು ಮಾಡಿಸಕೂಡದು. ಲೇವಿಯರು ಮಾಡಬೇಕಾದ ಕರ್ತವ್ಯಗಳನ್ನು ನೀನು ಹೀಗೆ ವಿಧಿಸಬೇಕು.</verse>
			</chapter>
			<chapter number="9">
				<verse number="1">ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟು ಬಂದ ಎರಡನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಸೀನಾಯಿ ಮರುಭೂಮಿಯಲ್ಲಿ ಸರ್ವೇಶ್ವರ ಸ್ವಾಮಿ ಮೋಶೆಯೊಂದಿಗೆ ಮಾತನಾಡಿದರು.</verse>
				<verse number="2">ಅವರು ಹೇಳಿದ್ದು ಇದು: “ಇಸ್ರಯೇಲರು ಪಾಸ್ಕ ಹಬ್ಬವನ್ನು ನಿಯಮಿತ ಕಾಲದಲ್ಲಿ ಆಚರಿಸುವಂತೆ ಹೇಳು.</verse>
				<verse number="3">ಈ ತಿಂಗಳಿನ ಹದಿನಾಲ್ಕನೇ ದಿನದ ಸಂಜೆ ಅದನ್ನು ಆಚರಿಸಬೇಕಾದ ನಿಯಮಿತ ವೇಳೆ. ಅದನ್ನು ಎಲ್ಲ ವಿಧಿನಿಯಮಗಳ ಪ್ರಕಾರ ಆಚರಿಸಬೇಕು.”</verse>
				<verse number="4">ಅಂತೆಯೇ ಮೋಶೆ ಇಸ್ರಯೇಲರಿಗೆ, “ನೀವು ಪಾಸ್ಕ ಹಬ್ಬವನ್ನು ಆಚರಿಸಬೇಕೆಂದು ಆಜ್ಞಾಪಿಸಲಾಗಿದೆ,” ಎಂದು ತಿಳಿಸಿದನು.</verse>
				<verse number="5">ಅವರು ಅದಕ್ಕನುಗುಣವಾಗಿ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ಸೀನಾಯಿ ಮರುಭೂಮಿಯಲ್ಲಿ ಪಾಸ್ಕವನ್ನು ಆಚರಿಸಿದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು.</verse>
				<verse number="6">ಆದರೆ ಕೆಲವರು ನರಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿದ್ದರು. ಆದ್ದರಿಂದ ಪಾಸ್ಕಹಬ್ಬವನ್ನು ನಿಯಮಿತ ದಿನದಂದು ಆಚರಿಸಲಾಗಲಿಲ್ಲ. ಅವರು ಮೋಶೆ - ಆರೋನರ ಬಳಿಗೆ ಬಂದು,</verse>
				<verse number="7">“ನರಶವದ ಸೋಂಕಿನಿಂದ ನಾವು ಅಶುದ್ಧರಾದೆವು. ನಿಯಮಿತ ಕಾಲದಲ್ಲಿ ಮಿಕ್ಕ ಇಸ್ರಯೇಲರೊಡನೆ ಸರ್ವೇಶ್ವರನಿಗೆ ಬಲಿಯನ್ನು ಸಮರ್ಪಿಸಲು ನಮಗೆ ಅಪ್ಪಣೆಯಿಲ್ಲವೆ?” ಎಂದು ವಿಚಾರಿಸಿದರು.</verse>
				<verse number="8">ಅವರಿಗೆ ಮೋಶೆ, “ಸ್ವಲ್ಪ ತಾಳಿ, ಸರ್ವೇಶ್ವರ ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುತ್ತಾರೋ ಎಂದು ವಿಚಾರಿಸುತ್ತೇನೆ,” ಎಂದು ಹೇಳಿದನು.</verse>
				<verse number="9">ಆಗ ಸರ್ವೇಶ್ವರ ಮೋಶೆಗೆ ಹೀಗೆಂದರು:</verse>
				<verse number="10">“ನೀನು ಇಸ್ರಯೇಲರಿಗೆ ಹೀಗೆ ಆಜ್ಞಾಪಿಸು - ‘ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಾಗಲಿ ಶವ ಸೋಂಕಿದುದರಿಂದ ಅಶುದ್ಧರಾದವರು ಮಾತ್ರವಲ್ಲ ದೂರ ಪ್ರಯಾಣದಲ್ಲಿರುವವರು ಕೂಡ ಸರ್ವೇಶ್ವರನ ಆಜ್ಞಾನುಸಾರ ಪಾಸ್ಕ ಹಬ್ಬವನ್ನು ಆಚರಿಸಲೇಬೇಕು.</verse>
				<verse number="11">ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ಅದನ್ನು ಆಚರಿಸಬೇಕು. ಹುಳಿಯಿಲ್ಲದ ರೊಟ್ಟಿ ಮತ್ತು ಕಹಿಯಾದ ಸೊಪ್ಪುಸದೆಗಳೊಂದಿಗೆ ಅದನ್ನು ಊಟಮಾಡಬೇಕು.</verse>
				<verse number="12">ಅದರಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಮಿಗಿಸಬಾರದು. ಅದರ ಒಂದು ಎಲುಬನ್ನಾದರೂ ಮುರಿಯಬಾರದು. ಪಾಸ್ಕ ಹಬ್ಬ ಕುರಿತ ವಿಧಿನಿಯಮಗಳ ಪ್ರಕಾರವೇ ಅದನ್ನು ಆಚರಿಸಬೇಕು.</verse>
				<verse number="13">ಒಬ್ಬನು ತಾನು ಶುದ್ಧನಾಗಿದ್ದರೂ ಪ್ರಯಾಣದಲ್ಲಿಲ್ಲದಿದ್ದರೂ ಪಾಸ್ಕ ಹಬ್ಬವನ್ನು ಆಚರಿಸಲು ತಪ್ಪಿದ್ದೇ ಆದರೆ ಅಂಥವನನ್ನು ಕುಲದಿಂದ ಹೊರಗೆ ಹಾಕಬೇಕು. ಅವನು ಸರ್ವೇಶ್ವರನಿಂದ ನಿಯಮಿತವಾದ ಬಲಿಯನ್ನು ಸಕಾಲದಲ್ಲಿ ಸಮರ್ಪಿಸದೆ ಹೋದುದರಿಂದ ತನ್ನ ಪಾಪಫಲವನ್ನು ಅನುಭವಿಸಲೇಬೇಕು.</verse>
				<verse number="14">ನಿಮ್ಮಲ್ಲಿ ಅನ್ಯದೇಶಿಯನೊಬ್ಬನು ಪ್ರವಾಸಿಯಾಗಿದ್ದು ಸರ್ವೇಶ್ವರನಿಗೆ ಪಾಸ್ಕ ಹಬ್ಬವನ್ನು ಆಚರಿಸಬೇಕೆಂದು ಬಯಸಿದರೆ ಅದನ್ನು ವಿಧಿನಿಯಮಗಳ ಅನುಸಾರವೇ ಆಚರಿಸಲಿ. ಪರದೇಶದವನಿಗೂ ಸ್ವದೇಶದವನಿಗೂ ಒಂದೇ ವಿಧಿಯಿರಬೇಕು.</verse>
				<verse number="15">ಇಸ್ರಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದಾಗ ಮೇಘವೊಂದು ಅದರ ಮೇಲೆ ಆವರಿಸಿಕೊಂಡಿತು. ಸಂಜೆಯಿಂದ ಮುಂಜಾನೆಯವರೆಗೂ ಅದು ಬೆಂಕಿಯಂತೆ ಕಾಣಿಸಿತು.</verse>
				<verse number="16">ಅದು ಸದಾ ಹಾಗೆಯೇ ಇರುತ್ತಿತ್ತು. ಆ ಮೇಘ ದೇವಸ್ಥಾನವನ್ನು ಆವರಿಸಿಕೊಳ್ಳುತ್ತಿತ್ತು; ರಾತ್ರಿವೇಳೆಯಲ್ಲಿ ಬೆಂಕಿಯಂತೆ ಕಾಣಿಸುತ್ತಿತ್ತು.</verse>
				<verse number="17">ಅದು ಗುಡಾರದಿಂದ ಮೇಲಕ್ಕೆ ಎದ್ದಾಗ ಇಸ್ರಯೇಲರು ಮುಂದಕ್ಕೆ ಪ್ರಯಾಣ ಮಾಡುತ್ತಿದ್ದರು. ಆ ಮೇಘ ಎಲ್ಲಿ ನಿಲ್ಲುತ್ತಿತ್ತೋ ಅಲ್ಲೇ ಇಸ್ರಯೇಲರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು.</verse>
				<verse number="18">ಸರ್ವೇಶ್ವರನ ಅಪ್ಪಣೆಯನ್ನು ಹೊಂದಿಯೇ ಅವರು ಪ್ರಯಾಣ ಮಾಡುತ್ತಿದ್ದರು. ಸರ್ವೇಶ್ವರನ ಅಪ್ಪಣೆಯನ್ನು ಪಡೆದು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಆ ಮೇಘವು ದೇವದರ್ಶನದ ಗುಡಾರದ ಮೇಲಿರುವ ತನಕ ಅವರು ಇದ್ದ ಸ್ಥಳದಲ್ಲೇ ಇರುತ್ತಿದ್ದರು.</verse>
				<verse number="19">ಅದು ಬಹುದಿನದವರೆಗೂ ದೇವದರ್ಶನದ ಗುಡಾರದ ಮೇಲೆ ಇರುತ್ತಿದ್ದ ಸಂದರ್ಭದಲ್ಲಿ ಇಸ್ರಯೇಲರು ಸರ್ವೇಶ್ವರನ ಸೂಚನೆಯನ್ನು ಅನುಸರಿಸಿ ಪ್ರಯಾಣಮಾಡದೆ ಇರುತ್ತಿದ್ದರು.</verse>
				<verse number="20">ಒಂದೊಂದು ವೇಳೆ ಆ ಮೇಘ ಕೆಲವು ದಿವಸ ಮಾತ್ರ ಗುಡಾರದ ಮೇಲೆ ನಿಂತಿರುತ್ತಿತ್ತು. ಸರ್ವೇಶ್ವರನ ಆಜ್ಞಾನುಸಾರ ಅವರು ಹಾಗೆಯೇ ಇಳಿದುಕೊಳ್ಳುತ್ತಿದ್ದರು. ಸರ್ವೇಶ್ವರನ ಆಜ್ಞಾನುಸಾರವಾಗಿಯೇ ತಮ್ಮ ಡೇರೆಗಳನ್ನು ಕಿತ್ತುಕೊಂಡು ಹೊರಡುತ್ತಿದ್ದರು.</verse>
				<verse number="21">ಕೆಲವೊಮ್ಮೆ ಆ ಮೇಘ ಸಾಯಂಕಾಲದಿಂದ ಹೊತ್ತಾರೆಯವರೆಗೆ ಇರುತ್ತಿತ್ತು. ಬೆಳಿಗ್ಗೆ ಅದು ಮೇಲಕ್ಕೆ ಎದ್ದಾಗ ಜನರು ಪ್ರಯಾಣ ಮಾಡುತ್ತಿದ್ದರು. ಕೆಲವು ಸಲ ಅದು ಹಗಲಿರುಳೂ ನಿಂತಿರುತ್ತಿತ್ತು. ಅದು ಯಾವಾಗ ಮೇಲೇಳುತ್ತಿತ್ತೋ ಆಗ ಜನರು ಹೊರಡುತ್ತಿದ್ದರು.</verse>
				<verse number="22">ದೇವದರ್ಶನದ ಗುಡಾರದ ಮೇಲೆ ಆ ಮೇಘ ನಿಲ್ಲುವುದು ಎರಡು ದಿನವಾದರೂ ತಿಂಗಳಾದರೂ ಒಂದು ವರ್ಷವಾದರೂ ಸರಿಯೇ ಅಲ್ಲಿಯತನಕ ಇಸ್ರಯೇಲರು ಪ್ರಯಾಣ ಮಾಡದೆ ಅಲ್ಲೇ ಇಳಿದುಕೊಂಡಿರುತ್ತಿದ್ದರು. ಅದು ಮೇಲೆದ್ದಾಗ ಅವರು ಹೊರಡುತ್ತಿದ್ದರು.</verse>
				<verse number="23">ಸರ್ವೇಶ್ವರನ ಆಜ್ಞೆಯ ಪ್ರಕಾರ ಅವರು ತಮ್ಮ ಡೇರೆಗಳನ್ನು ಹಾಕಿಕೊಳ್ಳುತ್ತಿದ್ದರು. ಸರ್ವೇಶ್ವರನ ಆಜ್ಞೆಯ ಪ್ರಕಾರವೇ ಡೇರೆಗಳನ್ನು ಕಿತ್ತು ಹೊರಡುತ್ತಿದ್ದರು. ಮೋಶೆಯ ಮುಖಾಂತರ ಸರ್ವೇಶ್ವರ ಆಜ್ಞಾಪಿಸಿದಂತೆಯೇ ಅವನು ಸರ್ವೇಶ್ವರನ ಸೂಚನೆಗಳನ್ನು ಅನುಸರಿಸಿ ನಡೆಯುತ್ತಿದ್ದರು.</verse>
			</chapter>
			<chapter number="10">
				<verse number="1">ಸರ್ವೇಶ್ವರ ಸ್ವಾಮಿ ಮೋಶೆಗೆ ಹೀಗೆಂದು ಆಜ್ಞಾಪಿಸಿದರು:</verse>
				<verse number="2">“ನೀನು ಬೆಳ್ಳಿಯ ತಗಡಿನಿಂದ ಎರಡು ಕಹಳೆಗಳನ್ನು ಮಾಡಿಸು. ಜನರನ್ನು ಸಭೆಸೇರಿಸುವುದಕ್ಕೂ ಹಾಗೂ ದಂಡನ್ನು ಹೊರಡಿಸುವುದಕ್ಕೂ ಅವುಗಳನ್ನು ಉಪಯೋಗಿಸು.</verse>
				<verse number="3">ಅವೆರಡನ್ನೂ ನೀನು ಊದಿಸುವಾಗ ಜನರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಿಲಿಗೆ ಕೂಡಿಬರಬೇಕು.</verse>
				<verse number="4">ಒಂದನ್ನು ಮಾತ್ರ ಊದಿಸಿದಾಗ ಇಸ್ರಯೇಲರಲ್ಲಿ ಸಹಸ್ರಾಧಿಪತಿಗಳಾದ ಮುಖ್ಯಸ್ಥರು ನಿನ್ನ ಬಳಿಗೆ ಕೂಡಿಬರಬೇಕು.</verse>
				<verse number="5">ಆರ್ಭಟವಾಗಿ ಮೊಳಗಿಸುವಾಗ ಪೂರ್ವದಿಕ್ಕಿನ ದಂಡುಗಳು ಹೊರಡಬೇಕು.</verse>
				<verse number="6">ಎರಡನೆಯ ಸಾರಿ ಆರ್ಭಟವಾಗಿ ಮೊಳಗಿಸಿದಾಗ ದಕ್ಷಿಣ ದಿಕ್ಕಿನ ದಂಡುಗಳು ಹೊರಡಬೇಕು. ಹೀಗೆ ಪ್ರಯಾಣ ಹೊರಡಬೇಕಾದಾಗ ಆರ್ಭಟವಾಗಿಯೇ ಮೊಳಗಿಸಬೇಕು.</verse>
				<verse number="7">ಜನರನ್ನು ಸಭೆಸೇರಿಸಬೇಕಾದಾಗ ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಮೊಳಗಿಸಬೇಕಾಗಿಲ್ಲ.</verse>
				<verse number="8">ಆರೋನನ ವಂಶಸ್ಥರಾದ ಯಾಜಕರೇ ಆ ಕಹಳೆಗಳನ್ನು ಊದಬೇಕು. “ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮವಾಗಿರಲಿ.</verse>
				<verse number="9">ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಪೀಡಿಸುವ ಶತ್ರುಗಳ ಮೇಲೆ ಯುದ್ಧಕ್ಕೆ ಹೊರಡುವಾಗ ಆ ಕಹಳೆಗಳನ್ನು ಆರ್ಭಟವಾಗಿ ಮೊಳಗಿಸಬೇಕು. ಆಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ನೆನಪಿಗೆ ತಂದುಕೊಂಡು ಶತ್ರುಗಳ ಕೈಯಿಂದ ನಿಮ್ಮನ್ನು ಬಿಡಿಸುವರು.</verse>
				<verse number="10">ಇದಲ್ಲದೆ, ಉತ್ಸವ ದಿನಗಳಲ್ಲೂ ಹಬ್ಬ ದಿನಗಳಲ್ಲೂ ಅಮಾವಾಸ್ಯೆಯಲ್ಲೂ ಮತ್ತು ದಹನಬಲಿಗಳನ್ನೂ ಸಮಾಧಾನ ಬಲಿಗಳನ್ನೂ ಅರ್ಪಿಸುವಾಗಲೂ ಆ ಕಹಳೆಗಳನ್ನು ಮೊಳಗಿಸಬೇಕು. ಆ ಧ್ವನಿ ನಿಮ್ಮನ್ನು ನಿಮ್ಮ ದೇವರ ನೆನಪಿಗೆ ತರಲು ನೆರವಾಗುವುದು. ನಾನೇ ನಿಮ್ಮ ದೇವರಾದ ಸರ್ವೇಶ್ವರ.”</verse>
				<verse number="11">ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದಿತು.</verse>
				<verse number="12">ಆದ್ದರಿಂದ ಇಸ್ರಯೇಲರು ಸೀನಾಯಿ ಮರುಭೂಮಿಯನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣ ಮಾಡಿದರು. ಬಳಿಕ ಆ ಮೇಘ ಪಾರಾನ್ ಮರುಭೂಮಿಯಲ್ಲಿ ನಿಂತಿತು.</verse>
				<verse number="13">ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದ ಕ್ರಮಾನುಸಾರ ದಂಡುಗಳು ಪ್ರಯಾಣಮಾಡಿದ್ದು ಇದೇ ಮೊದಲನಯ ಸಾರಿ.</verse>
				<verse number="14">ಮುಂಭಾಗದಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕನಾಗಿದ್ದವನು ಅಮ್ಮೀನಾದಾಬನ ಮಗ ನಹಶೋನನು.</verse>
				<verse number="15">ಇಸ್ಸಾಕಾರ್ ಕುಲಕ್ಕೆ ಸೇನಾನಾಯಕನಾಗಿದ್ದವನು ಚೂವಾರನ ಮಗ ನೆತನೇಲನು.</verse>
				<verse number="16">ಜೆಬುಲೂನ್ ಕುಲಕ್ಕೆ ಹೇಲೋನನ ಮಗ ಎಲೀಯಾಬನು ಸೇನಾನಾಯಕನಾಗಿದ್ದನು.</verse>
				<verse number="17">ಬಳಿಕ ದೇವದರ್ಶನದ ಗುಡಾರವನ್ನು ಇಳಿಸಿದ್ದೇ ಗೇರ್ಷೋನ್ಯರೂ ಮೆರಾರೀಯರೂ ಅದನ್ನು ಹೊತ್ತುಕೊಂಡು ಹೊರಟರು.</verse>
				<verse number="18">ಆಮೇಲೆ ರೂಬೇನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕ ಶೆದೇಯೂರನ ಮಗ ಎಲೀಚೂರನು.</verse>
				<verse number="19">ಸಿಮೆಯೋನ್ ಕುಲದ ಸೇನಾನಾಯಕನು ಚೂರಿಷದ್ದೈಯನ ಮಗ ಶೆಲುಮೀಯೇಲನು.</verse>
				<verse number="20">ಗಾದ್ ಕುಲದ ಸೇನಾನಾಯಕ ರೇಗೂವೇಲನ ಮಗ ಎಲ್ಯಾಸಾಫನು.</verse>
				<verse number="21">ಅವರ ಹಿಂದೆ ಕೆಹಾತ್ಯರು ದೇವಸ್ಥಾನದ ಸಾಮಾಗ್ರಿಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಮಿಕ್ಕ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.</verse>
				<verse number="22">ತದನಂತರ ಎಫ್ರಾಯೀಮ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ಹೊರಟರು. ಅವರ ಸೇನಾನಾಯಕ ಅಮ್ಮೀಹೂದನ ಮಗ ಎಲೀಷಾಮನು.</verse>
				<verse number="23">ಮನಸ್ಸೆ ಕುಲದ ಸೇನಾನಾಯಕ ಪೆದಾಚೂರನ ಮಗ ಗಮ್ಲೀಯೇಲನು.</verse>
				<verse number="24">ಬೆನ್ಯಾಮೀನ್ ಕುಲದ ಸೇನಾನಾಯಕ ಗಿದ್ಯೋನಿಯ ಮಗ ಅಬೀದಾನನು.</verse>
				<verse number="25">ಈ ಎಲ್ಲಾ ದಂಡುಗಳ ಹಿಂಭಾಗದಲ್ಲಿ ದಾನ್ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ಹೊರಟರು. ಅವರಿಗೆ ಸೇನಾನಾಯಕ ಅಮ್ಮೀಷದ್ದೈಯನ ಮಗ ಅಹೀಗೆಜೆರನು.</verse>
				<verse number="26">ಆಶೇರ್ ಕುಲಕ್ಕೆ ಸೇನಾನಾಯಕ ಒಕ್ರಾನನ ಮಗ ಪಗೀಯೇಲನು.</verse>
				<verse number="27">ನಫ್ತಾಲಿ ಕುಲಕ್ಕೆ ಸೇನಾನಾಯಕ ಏನಾನನ ಮಗ ಅಹೀರನು.</verse>
				<verse number="28">ಈ ಕ್ರಮದಲ್ಲಿ ಇಸ್ರಯೇಲರು ಸೈನ್ಯ ಸೈನ್ಯವಾಗಿ ಹೊರಟು ಪ್ರಯಾಣ ಮಾಡಿದರು.</verse>
				<verse number="29">ಮೋಶೆ ತನ್ನ ಮಾವನಾಗಿದ್ದ ಮಿದ್ಯಾನ್ಯನಾದ ರೆಗೂವೇಲನ ಮಗ ಹೋಬಾಬನಿಗೆ, “ಸರ್ವೇಶ್ವರ ನಮಗೆ ಕೊಡುವುದಾಗಿ ವಾಗ್ದಾನ ಮಾಡಿದ ನಾಡಿಗೆ ನಾವು ಪ್ರಯಾಣ ಮಾಡುತ್ತಿದ್ದೇವೆ. ಇಸ್ರಯೇಲರಿಗೆ ಒಳಿತನ್ನೇ ಮಾಡುವುದಾಗಿ ಸರ್ವೇಶ್ವರ ಸ್ವಾಮಿಯೇ ಹೇಳಿದ್ದಾರೆ. ಆದ್ದರಿಂದ ನೀನೂ ನಮ್ಮ ಸಂಗಡ ಬಾ; ನಮ್ಮಿಂದ ನಿನಗೂ ಒಳ್ಳೆಯದಾಗುವುದು,” ಎಂದು ಹೇಳಿದ.</verse>
				<verse number="30">ಅದಕ್ಕೆ ಅವನು, “ನಾನು ಬರುವುದಿಲ್ಲ; ನನ್ನ ಸ್ವದೇಶಕ್ಕೆ, ನನ್ನ ಸ್ವಜನರ ಬಳಿಗೆ ಹೋಗುತ್ತೇನೆ,” ಎಂದು ಉತ್ತರಿಸಿದ.</verse>
				<verse number="31">ಅದಕ್ಕೆ ಮೋಶೆ, “ನಮ್ಮನ್ನು ಬಿಟ್ಟುಹೋಗಬೇಡವೆಂದು ಬೇಡಿಕೊಳ್ಳುತ್ತೇನೆ. ಈ ಮರುಭೂಮಿಯಲ್ಲಿ ಡೇರೆಗಳನ್ನು ಹಾಕುವ ಸ್ಥಳಗಳು ನಿನಗೆ ಮಾತ್ರ ತಿಳಿದಿವೆ.</verse>
				<verse number="32">ಆದ್ದರಿಂದ ನೀನು ನಮಗೆ ಕಣ್ಣಾಗಿರಬೇಕು. ನೀನು ನಮ್ಮ ಸಂಗಡ ಬಂದರೆ ಸರ್ವೇಶ್ವರ ನಮಗೆ ಮಾಡುವ ಒಳಿತೆಲ್ಲವನ್ನು ನಿನ್ನೊಂದಿಗೆ ಹಂಚಿಕೊಳ್ಳುತ್ತೇವೆ,” ಎಂದು ಉತ್ತರಕೊಟ್ಟನು.</verse>
				<verse number="33">ಅವರು ಸರ್ವೇಶ್ವರನ ಬೆಟ್ಟವನ್ನು ಬಿಟ್ಟು ಮೂರುದಿನದ ಪ್ರಯಾಣದಷ್ಟು ದೂರಹೋದರು. ಇಳಿದುಕೊಳ್ಳಲು ಸೂಕ್ತವಾದ ಸ್ಥಳವನ್ನು ನೋಡಲು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಆ ಮೂರು ದಿವಸ ಅವರಿಗೆ ಮುಂದಾಗಿ ಹೋಗುತ್ತಿತ್ತು.</verse>
				<verse number="34">ಅವರು ಪಾಳೆಯದಿಂದ ಹೊರಡುವಾಗ ಹಗಲಲ್ಲಿ ಸರ್ವೇಶ್ವರನ ಮೇಘ ಅವರ ಮೇಲೆ ಇರುತ್ತಿತ್ತು.</verse>
				<verse number="35">ಸರ್ವೇಶ್ವರನ ಮಂಜೂಷ ಹೊರಡುವಾಗ ಮೋಶೆ, “ಹೊರಡೋಣವಾಗಲಿ ಸರ್ವೇಶ್ವರಾ, ಎಚ್ಚೆತ್ತು ಚದರಿಹೋಗಲಿ ನಿಮ್ಮ ಶತ್ರುಗಳು ಬೆಂಗೊಟ್ಟು ಓಡಿಹೋಗಲಿ ನಿಮ್ಮ ಹಗೆಗಾರರು” ಎಂದು ಹೇಳುತ್ತಿದ್ದನು.</verse>
				<verse number="36">ಆ ಮಂಜೂಷ ನಿಂತಾಗ: “ಮರಳಿ ಬರೋಣವಾಗಲಿ, ಸರ್ವೇಶ್ವರಾ ಸಹಸ್ರಾರು ಇಸ್ರಯೇಲ್ ಕುಟುಂಬಗಳ ಬಳಿಗೆ,” ಎಂದು ಹೇಳುತ್ತಿದ್ದನು.</verse>
			</chapter>
			<chapter number="11">
				<verse number="1">ಇಸ್ರಯೇಲರು ತಮಗೆ ದುರವಸ್ಥೆ ಪ್ರಾಪ್ತವಾಯಿತೆಂದು ಸರ್ವೇಶ್ವರ ಸ್ವಾಮಿಗೆ ವಿರುದ್ಧ ಗುಣಗುಟ್ಟಿದರು. ಅದಕ್ಕೆ ಕೋಪಗೊಂಡ ಸರ್ವೇಶ್ವರ ಅವರ ಮಧ್ಯೆ ಬೆಂಕಿ ಬೀಳುವಂತೆ ಮಾಡಿದರು. ಇದರ ಪರಿಣಾಮವಾಗಿ ಪಾಳೆಯದ ಕಡೇಭಾಗದಲ್ಲಿದ್ದವರು ಸುಟ್ಟುಹೋದರು.</verse>
				<verse number="2">ಆಗ ಜನರು ಮೋಶೆಯ ಬಳಿಗೆ ಬಂದು ಮೊರೆಯಿಟ್ಟರು. ಮೋಶೆ ಅವರ ಪರವಾಗಿ ಸರ್ವೇಶ್ವರನನ್ನು ಪ್ರಾರ್ಥಿಸಿದ್ದೇ ಆ ಬೇಂಕಿ ಆರಿಹೋಯಿತು.</verse>
				<verse number="3">ಆದ್ದರಿಂದ ಹಾಗು ಸರ್ವೇಶ್ವರನೇ ಆ ಬೆಂಕಿಯನ್ನು ಬರಮಾಡಿದ್ದ ಕಾರಣ ಆ ಸ್ಥಳಕ್ಕೆ “ತಬೇರ” ಎಂದು ಹೆಸರಾಯಿತು.</verse>
				<verse number="4">ಇಸ್ರಯೇಲರೊಡನೆ ಪ್ರಯಾಣ ಮಾಡುತ್ತಿದ್ದ ಅನ್ಯಜನರು ಮಾಂಸಕ್ಕಾಗಿ ಹಂಬಲಿಸಿದರು. ಇಸ್ರಯೇಲರು ಕೂಡ, ಕಣ್ಣೀರಿಡುತ್ತಾ: “ಅಯ್ಯೋ, ನಮಗೆ ಮಾಂಸ ಕೊಡುವವರಾರು?</verse>
				<verse number="5">ಈಜಿಪ್ಟ್ ದೇಶದಲ್ಲಿ ನಾವು ಬಿಟ್ಟಿಯಾಗಿ ತಿನ್ನುತ್ತಿದ್ದ ಮೀನು, ಸೌತೆಕಾಯಿ, ಕರ್ಬೂಜ, ಉಳ್ಳಿಗಡ್ಡೆ, ನೀರುಳ್ಳಿ, ಬೆಳ್ಳುಳ್ಳಿ ಇವೆಲ್ಲಾ ನೆನಪಿಗೆ ಬರುತ್ತವೆ.</verse>
				<verse number="6">ಇಲ್ಲಿಯಾದರೋ ನಮ್ಮ ಜೀವ ಬತ್ತಿಹೋಯಿತು? ಈ ‘ಮನ್ನ’ವನ್ನು ಬಿಟ್ಟರೆ ನಮಗೆ ಇನ್ನೇನು ಗತಿಯಿಲ್ಲ” ಎಂದು ನಿಷ್ಠುರವಾಗಿ ಮಾತನಾಡಿಕೊಳ್ಳುತ್ತಿದ್ದರು.</verse>
				<verse number="7">ಆ ‘ಮನ್ನ’ ಕೊತ್ತುಂಬರಿ ಬೀಜದಂತಿತ್ತು; ಗುಗ್ಗುಲದಂತೆ ಕಾಣಿಸುತ್ತಿತ್ತು.</verse>
				<verse number="8">ಜನರು ಹೊರಗೆ ಹೋಗಿ ಅದನ್ನು ಕೂಡಿಸಿಕೊಂಡು ಬಂದು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಲ್ಲಿ ಕುಟ್ಟಿ, ಮಡಕೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಳ್ಳುತ್ತಿದ್ದರು. ಅದರ ರುಚಿ ಎಣ್ಣೆಬೆರೆಸಿ ಮಾಡಿದ ತಿಂಡಿಯಂತೆ ಇರುತ್ತಿತ್ತು.</verse>
				<verse number="9">ರಾತ್ರಿಯಲ್ಲಿ ಮಂಜು ಪಾಳೆಯದ ಮೇಲೆ ಬೀಳುತ್ತಿದ್ದಾಗ ಅದರೊಂದಿಗೆ ‘ಮನ್ನ’ವೂ ಬೀಳುತ್ತಿತ್ತು.</verse>
				<verse number="10">ಎಲ್ಲ ಕುಟುಂಬದವರು ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ನಿಂತು ನಿಷ್ಠೂರವಾಗಿ ಮಾತನಾಡಿಕೊಳ್ಳುತ್ತಿದ್ದದ್ದು ಮೋಶೆಗೆ ಕೇಳಿಸಿತು. ಆಗ ಸರ್ವೇಶ್ವರನ ಕೋಪ ಉಕ್ಕೇರಿತು; ಮೋಶೆಗೆ ಇದನ್ನು ಸಹಿಸಲಾಗಲಿಲ್ಲ.</verse>
				<verse number="11">ಆತ ಸರ್ವೇಶ್ವರನಿಗೆ, “ನಿಮ್ಮ ದಾಸನಾದ ನನಗೇಕೆ ಈ ಜನರನ್ನು ಕರೆದೊಯ್ಯುವ ಭಾರವನ್ನು ಹಾಕಿದಿರಿ?</verse>
				<verse number="12">ನಿಮ್ಮ ದಯೆಗೆ ನಾನು ಅಯೋಗ್ಯನಾದೆನೇ? ‘ಮೊಲೆ ಕೂಸನ್ನು ಎತ್ತಿಕೊಂಡು ಹೋಗುವವಳಂತೆ ಈ ಜನರನ್ನು ತೋಳತೆಕ್ಕೆಯಲ್ಲಿರಿಸಿ, ಅವರ ಪೂರ್ವಜರಿಗೆ ನಾನು ಪ್ರಮಾಣಮಾಡಿದ ನಾಡಿಗೆ ಒಯ್ಯಿ’ ಎಂದು ಹೇಳುತ್ತೀರಲ್ಲವೆ? ನಾನು ಇವರಿಗೆ ಹೆತ್ತ ತಾಯಿಯೋ?</verse>
				<verse number="13">ಇವರು ನಿಷ್ಠೂರವಾಗಿ ಮಾತಾಡುತ್ತಾ ನನ್ನ ಬಳಿಗೆ ಬಂದು, ‘ತಿನ್ನಲಿಕ್ಕೆ ನಮಗೆ ಮಾಂಸವನ್ನು ಕೊಡು’ ಎಂದು ಕೇಳುತ್ತಿದ್ದಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸ ನನಗೆಲ್ಲಿ ದೊರಕೀತು.</verse>
				<verse number="14">ಇಷ್ಟು ಜನರ ಭಾರವನ್ನು ನಾನೊಬ್ಬನೇ ಹೊರುವುದು ಅಸಾಧ್ಯ. ಅದು ನನ್ನ ಶಕ್ತಿಗೆ ಮೀರಿದ ಕೆಲಸ.</verse>
				<verse number="15">ನೀವು ಹೀಗೆ ಮಾಡುವುದಕ್ಕಿಂತಲೂ ನನ್ನನ್ನು ಈ ಕೂಡಲೆ ಕೊಂದುಹಾಕಿದರೆ ಉಪಕಾರವಾದೀತು; ನನಗಾಗುತ್ತಿರುವ ಸಂಕಟವನ್ನು ಸಹಿಸಲಾರೆ,” ಎಂದನು.</verse>
				<verse number="16">ಆಗ ಸರ್ವೇಶ್ವರ ಮೋಶೆಗೆ ಹೇಳಿದುದು: “ಇಸ್ರಯೇಲರಲ್ಲಿ ಹಿರಿಯರೆಂದೂ ಅಧಿಪತಿಗಳೆಂದೂ ನನಗೆ ತಿಳಿದಿರುವ ಎಪ್ಪತ್ತು ಮಂದಿಯನ್ನು ಕೂಟವಾಗಿ ಕರೆಸಿ ದೇವದರ್ಶನದ ಗುಡಾರದ ಬಳಿಗೆ ಕರೆದುಕೊಂಡು ಬಾ. ಅವರು ಅಲ್ಲೇ ನಿನ್ನೊಡನೆ ನಿಂತಿರಲಿ.</verse>
				<verse number="17">ನಾನು ಅಲ್ಲಿಗೆ ಇಳಿದುಬಂದು ನಿನ್ನೊಡನೆ ಮಾತಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ಅವರಿಗೂ ಹಂಚಿಕೊಡುವೆನು. ಆಗ ನೀನೊಬ್ಬನೇ ಈ ಜನರ ಜವಾಬ್ದಾರಿಯನ್ನು ವಹಿಸಬೇಕಾಗುವುದಿಲ್ಲ; ನಿನ್ನ ಸಂಗಡ ಇವರೂ ವಹಿಸಿಕೊಳ್ಳುವರು.</verse>
				<verse number="18">“ಇದಲ್ಲದೆ ಇಸ್ರಯೇಲರಿಗೆ ಹೀಗೆಂದು ಹೇಳು: ‘ನಾಳೆ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ; ನಾಳೆ ನಿಮಗೆ ಮಾಂಸಾಹಾರ ದೊರಕುವುದು. ನೀವು ಸರ್ವೇಶ್ವರನಿಗೆ ಕೇಳಿಸುವಂತೆ - ನಮಗೆ ಮಾಂಸ ಕೊಡುವವರೇ ಇಲ್ಲ; ಈಜಿಪ್ಟ್ ದೇಶದಲ್ಲಿ ಎಷ್ಟೋ ಸುಖವಾಗಿದ್ದೆವು - ಎಂದು ನಿಷ್ಠೂರವಾಗಿ ಮಾತಾಡುತ್ತೀರಿ. ಆದ್ದರಿಂದ ಸರ್ವೇಶ್ವರನೇ ನಿಮಗೆ ಮಾಂಸವನ್ನು ತಿನ್ನಲಿಕ್ಕೆ ಕೊಡುವರು.</verse>
				<verse number="19">ನಿಮ್ಮ ಮಧ್ಯೆಯೇ ಇರುವ ಸರ್ವೇಶ್ವರನನ್ನು ಧಿಕ್ಕರಿಸಿ, ಅಯ್ಯೋ, ನಾವು ಈಜಿಪ್ಟನ್ನು ಬಿಟ್ಟುಬಂದು ಮೋಸವಾಯಿತು’ ಎಂದು ಅವರ ಮುಂದೆ ನಿಷ್ಠೂರವಾಗಿ ಮಾತಾಡಿದಿರಿ. ಆದ್ದರಿಂದ ನೀವು ಒಂದು ದಿನವಲ್ಲ, ಎರಡು ದಿನವಲ್ಲ, ಐದು ದಿನವಲ್ಲ, ಇಪ್ಪತ್ತು ದಿನವಲ್ಲ, ಒಂದು ತಿಂಗಳು, ಪೂರ್ತಿ ತಿನ್ನುವಿರಿ.</verse>
				<verse number="20">ಅದು ಓಕರಿಕೆಯಾಗಿ, ನಿಮ್ಮ ಮೂಗಿನಲ್ಲಿ ಹೊರಟು ನಿಮಗೆ ಅಸಹ್ಯವಾಗುವ ತನಕ ಅದನ್ನು ತಿನ್ನುವಿರಿ.”</verse>
				<verse number="21">ಮೋಶೆ ಸರ್ವೇಶ್ವರನಿಗೆ, ” ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಆದರೂ ನೀವು, ‘ಇವರು ಇಡೀ ಒಂದು ತಿಂಗಳು ತಿನ್ನುವಷ್ಟು ಮಾಂಸವನ್ನು ಕೊಡುತ್ತೇನೆ’ ಎಂದು ಹೇಳಿದ್ದೀರಿ.</verse>
				<verse number="22">ಅವರಿಗೆ ಬೇಕಾದಷ್ಟು ಸಿಗುವಂತೆ ಆಡುಕುರಿಗಳನ್ನು ದನಗಳನ್ನೂ ಕೊಯ್ಯಬೇಕೆನ್ನುತ್ತೀರೋ? ಇಲ್ಲವೆ ಸಮುದ್ರದಲ್ಲಿರುವ ಮೀನುಗಳನ್ನೆಲ್ಲಾ ಹಿಡಿದುಕೊಳ್ಳಬೇಕೆನ್ನುತ್ತೀರೋ? ಎಂದು ಹೇಳಿದನು.</verse>
				<verse number="23">ಸರ್ವೇಶ್ವರ ಅವನಿಗೆ, “ಸರ್ವೇಶ್ವರನ ಕೈ ಮೋಟುಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನೇ ನೋಡುವೆ” ಎಂದರು.</verse>
				<verse number="24">ಮೋಶೆ ಹೊರಟುಹೋಗಿ ಸರ್ವೇಶ್ವರನ ಮಾತುಗಳನ್ನು ಜನರಿಗೆ ತಿಳಿಸಿದನು. ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ದೇವದರ್ಶನದ ಗುಡಾರದ ಸುತ್ತಲೂ ನಿಲ್ಲಿಸಿದನು.</verse>
				<verse number="25">ಆಗ ಸರ್ವೇಶ್ವರ ಮೇಘದಲ್ಲಿ ಇಳಿದುಬಂದು ಅವನೊಡನೆ ಮಾತಾಡಿ ಅವನಿಗೆ ಅನುಗ್ರಹಿಸಲಾಗಿದ್ದ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಹಂಚಿದರು. ಆ ಶಕ್ತಿ ಅವರ ಮೇಲೆ ಇಳಿದುಬಂದಾಗ ಅವರು ಪರವಶರಾಗಿ ಪ್ರವಾದಿಸಿದರು. ಅಂಥ ಅನುಭವ ಅವರಿಗೆ ಮತ್ತೆ ಬರಲಿಲ್ಲ.</verse>
				<verse number="26">ಎಲ್ದಾದ್ ಮತ್ತು ಮೇದಾದ್ ಎಂಬ ಹಿರಿಯರಿಬ್ಬರು ಪಾಳೆಯದೊಳಗೆ ಉಳಿದುಕೊಂಡಿದ್ದರು. ಅವರ ಹೆಸರು ಲಿಖಿತವಾಗಿದ್ದರೂ ಅವರು ದೇವದರ್ಶನದ ಗುಡಾರಕ್ಕೆ ಹೊರಟುಬಂದಿರಲಿಲ್ಲ. ಆ ಆತ್ಮಶಕ್ತಿ ಅವರ ಮೇಲೂ ಇಳಿದು ಬಂದುದರಿಂದ ಅವರು ಕೂಡ ಪಾಳೆಯದಲ್ಲೇ ಪರವಶರಾಗಿ ಪ್ರವಾದಿಸಿದರು.</verse>
				<verse number="27">ಆಗ ಒಬ್ಬ ಯುವಕ ಮೋಶೆಯ ಬಳಿಗೆ ಓಡಿಬಂದು, “ಎಲ್ದಾದ್ ಮತ್ತು ಮೇದಾದರು ಪಾಳೆಯದಲ್ಲೇ ಪರವಶರಾಗಿ ಪ್ರವಾದಿಸುತ್ತಿದ್ದಾರೆ,” ಎಂದು ತಿಳಿಸಿದನು.</verse>
				<verse number="28">ಚಿಕ್ಕಂದಿನಿಂದ ಮೋಶೆಗೆ ಶಿಷ್ಯನಾಗಿದ್ದ ಹಾಗೂ ನೂನನ ಮಗನಾಗಿದ್ದ ಯೆಹೋಶುವನು ಮೋಶೆಗೆ, “ಗುರುವೇ, ಅವರಿಗೆ ಅದು ಬೇಡವೆನ್ನಬೇಕು ಎಂದು ವಿನಂತಿಸಿದನು.</verse>
				<verse number="29">ಅದಕ್ಕೆ ಮೋಶೆ, “ನನ್ನ ಗೌರವ ಕಾಪಾಡಲು ನಿನಗೇಕೆ ಅಸೂಯೆ? ಸರ್ವೇಶ್ವರನ ಅನುಗ್ರಹದಿಂದ ಅವರ ಜನರೆಲ್ಲರೂ ಆತ್ಮಶಕ್ತಿಯನ್ನು ಹೊಂದಿ ಪ್ರವಾದಿಸುವವರಾದರೆ ಎಷ್ಟೋ ಒಳ್ಳೆಯದು” ಎಂದನು.</verse>
				<verse number="30">ತರುವಾಯ ಮೋಶೆ ಮತ್ತು ಇಸ್ರಯೇಲರ ಹಿರಿಯರು ಪಾಳೆಯಕ್ಕೆ ಹಿಂದಿರುಗಿದರು.</verse>
				<verse number="31">ಸರ್ವೇಶ್ವರನಿಂದ ಕಳಿಸಲಾದ ಗಾಳಿಯೊಂದು ಸಮುದ್ರದ ಕಡೆಯಿಂದ ಲಾವಕ್ಕಿಗಳನ್ನು ಹೊಡೆದುಕೊಂಡು ಬಂದಿತು. ಆ ಹಕ್ಕಿಗಳು ಪಾಳೆಯದ ಸುತ್ತಲೂ ಒಂದು ದಿನದ ಪ್ರಯಾಣದಷ್ಟು ದೂರದವರೆಗೆ ಭೂಮಿಗಿಂತ ಎರಡು ಮೊಳ ಎತ್ತರದಲ್ಲಿ ಹಾರುತ್ತಾ ಬಂದವು.</verse>
				<verse number="32">ಇಸ್ರಯೇಲರು ಆ ದಿನ ಹಗಲಿರುಳೂ ಮರುದಿನ ಹಗಲೂ ಆ ಲಾವಕ್ಕಿಗಳನ್ನು ಕೂಡಿಸಿಕೊಂಡರು. ಕಡಿಮೆ ಕೂಡಿಸಿಕೊಂಡವರು ಕೂಡ ಸಾವಿರ ಕಿಲೋಗ್ರಾಂನಷ್ಟು ಕೂಡಿಸಿಕೊಂಡರು. ಅವುಗಳನ್ನು ಪಾಳೆಯದ ಸುತ್ತಲೂ ಹರವಿ ಒಣಗಿಸಿಕೊಂಡರು.</verse>
				<verse number="33">ಅವರು ಆ ಮಾಂಸವನ್ನು ಕಚ್ಚಿ ಅಗಿದು ತಿಂದು ಮುಗಿಸುವುದರೊಳಗೆ ಸರ್ವೇಶ್ವರನ ಕೋಪ ಅವರ ವಿರುದ್ಧ ಉದ್ರೇಕಗೊಂಡಿತು. ಬಹಳಷ್ಟು ಜನ ಘೋರವ್ಯಾಧಿಗೆ ತುತ್ತಾಗಿ ಸತ್ತರು.</verse>
				<verse number="34">ಆ ಸ್ಥಳಕ್ಕೆ “ಕಿಬ್ರೋತ್ ಹತಾವಾ” ಎಂದು ಹೆಸರಾಯಿತು. ಏಕೆಂದರೆ ಅತ್ಯಾಸೆಪಟ್ಟವರು ಅಲ್ಲಿ ಸಮಾಧಿಯಾದರು.</verse>
				<verse number="35">ಇಸ್ರಯೇಲರು ಕಿಬ್ರೋತ್ ಹತಾವಾದಿಂದ ಹೊರಟು ಹಚೇರೋತಿಗೆ ಬಂದು ಅಲ್ಲಿ ತಂಗಿದರು.</verse>
			</chapter>
			<chapter number="12">
				<verse number="1">ಮೋಶೆ ಕೂಷ್ ನಾಡಿನ ಮಹಿಳೆಯೊಬ್ಬಳನ್ನು ಮದುವೆ ಮಾಡಿಕೊಂಡಿದ್ದನು. ಈ ಕಾರಣ ಮಿರ್ಯಾಮಳು ಮತ್ತು ಆರೋನನು ಅವನಿಗೆ ವಿರುದ್ಧ ಮಾತಾಡತೊಡಗಿದರು.</verse>
				<verse number="2">“ಸರ್ವೇಶ್ವರ ಸ್ವಾಮಿ ಮೋಶೆಯ ಮುಖಾಂತರ ಮಾತ್ರ ಮಾತಾಡಿದ್ದಾರೋ? ನಮ್ಮ ಮುಖಾಂತರ ಮಾತಾಡಲಿಲ್ಲವೋ?’ ಎಂದು ಹೇಳತೊಡಗಿದರು.</verse>
				<verse number="3">ಅವರು ಆಡಿದ ಮಾತು ಸರ್ವೇಶ್ವರನಿಗೆ ಮುಟ್ಟಿತು. ಮೋಶೆ ಸಾಧುಮನುಷ್ಯ. ನರಮಾನವರಲ್ಲೆಲ್ಲಾ ಅತ್ಯಂತ ಸಾಧು.</verse>
				<verse number="4">ಹೀಗಿರಲಾಗಿ ಸರ್ವೇಶ್ವರ ತಟ್ಟನೆ ಮೋಶೆ, ಆರೋನ್ ಹಾಗೂ ಮಿರ್ಯಾಮರಿಗೆ, “ನೀವು ಮೂವರು ದೇವದರ್ಶನದ ಗುಡಾರಕ್ಕೆ ಬರಬೇಕು,” ಎಂದು ಆಜ್ಞಾಪಿಸಿದರು.</verse>
				<verse number="5">ಅವರು ಬಂದಾಗ ಸರ್ವೇಶ್ವರ ಮೇಘಸ್ತಂಭದಲ್ಲಿ ಇಳಿದು ಬಂದು ದೇವದರ್ಶನದ ಗುಡಾರದ ಬಾಗಿಲಲ್ಲಿ ನಿಂತು ಆರೋನ್ ಹಾಗೂ ಮಿರ್ಯಾಮಳನ್ನು ಹತ್ತಿರಕ್ಕೆ ಕರೆದರು.</verse>
				<verse number="6">ಅವರು ಸಮೀಪಿಸಿದಾಗ, “ನನ್ನ ಮಾತಿಗೆ ಕಿವಿಗೊಡಿ ನಿಮ್ಮಲ್ಲಿ ಪ್ರವಾದಿಯಿದ್ದರೆ ಅವನಿಗೆ ಕಾಣಿಸಿಕೊಳ್ಳುವೆ ಜ್ಞಾನದೃಷ್ಟಿಯಲ್ಲಿ ಇಲ್ಲವೆ ಅವನ ಸಂಗಡ ಮಾತಾಡುವೆ ಸ್ವಪ್ನದಲ್ಲಿ.</verse>
				<verse number="7">ನನ್ನ ದಾಸನಾದ ಮೋಶೆ ಅಂಥವನಲ್ಲ ಅವನೇ ನಂಬಿಗಸ್ತ ನನ್ನ ಮನೆಯಲ್ಲೆಲ್ಲಾ.</verse>
				<verse number="8">ನಾನವನ ಸಂಗಡ ಮಾತಾಡುವುದು ನಿಗೂಢವಾಗಿ ಅಲ್ಲ, ಮುಖಾಮುಖಿಯಾಗಿ, ಸ್ಪಷ್ಟವಾಗಿ, ಒಗಟಾಗಿಯಲ್ಲ ಸರ್ವೇಶ್ವರನ ಸ್ವರೂಪವನ್ನೆ ಕಂಡವನಾತ! ಇಂತಿರಲು ನನ್ನ ದಾಸ ಮೋಶೆಗೆ ವಿರುದ್ಧ ಮಾತನಾಡಲು ನೀವೇಕೆ ಭಯಪಡಲಿಲ್ಲಾ? ಎಂದು ಹೇಳಿ ಕೋಪದಿಂದ ಹೊರಟುಹೋದರು.</verse>
				<verse number="9">ಆ ಮೇಘವು ದೇವದರ್ಶನದ ಗುಡಾರದಿಂದ ಅದೃಶ್ಯವಾದದ್ದೇ ಇಗೋ, ಮಿರ್ಯಾಮಳ ಚರ್ಮ ಹಿಮದಂತೆ ಬಿಳಿಚಿಕೊಂಡಿತ್ತು. ಆಕೆಗೆ ತೊನ್ನು ಹತ್ತಿತ್ತು. ಆರೋನನು ಆಕೆಯನ್ನು ನೋಡಿ ಆಕೆಗೆ ತೊನ್ನು ಪ್ರಾಪ್ತವಾಯಿತೆಂದು ತಿಳಿದುಕೊಂಡನು.</verse>
				<verse number="10"></verse>
				<verse number="11">ಆಗ ಆರೋನನು ಮೋಶೆಗೆ, “ಅಯ್ಯಾ, ನಾವು ಮೂರ್ಖರಾಗಿ ನಡೆದು ಪಾಪಕಟ್ಟಿಕೊಂಡೆವು. ಈ ಪಾಪದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡ,” ಇದು ನನ್ನ ವಿನಂತಿ.</verse>
				<verse number="12">ಅರ್ಧ ಮಾಂಸ ಕೊಳೆತುಹೋಗಿ ಹುಟ್ಟಿದ ಶಿಶುವಿನ ಶವದಂತೆ ಈಕೆ ಆಗುವುದು ಬೇಡ,” ಎಂದು ಕೇಳಿಕೊಂಡನು.</verse>
				<verse number="13">ಆಗ ಮೋಶೆ ಸರ್ವೇಶ್ವರನಿಗೆ, “ಹೇ ದೇವಾ, ಆಕೆಯನ್ನು ಗುಣಪಡಿಸಬೇಕೆಂದು ಬೇಡಿಕೊಳ್ಳುತ್ತೇನೆ,” ಎಂದು ಮೊರೆಯಿಟ್ಟನು.</verse>
				<verse number="14">ಅದಕ್ಕೆ ಸರ್ವೇಶ್ವರ, “ಅವಳ ತಂದೆ ಅವಳ ಮುಖದ ಮೇಲೆ ಉಗುಳಿದ್ದರೆ ಏಳು ದಿವಸ ಅವಳು ನಾಚಿಕೆಯಿಂದ ಮರೆಯಾಗುತ್ತಿದ್ದಳಲ್ಲವೆ? ಅಂತೆಯೇ ಅವಳು ಏಳು ದಿವಸ ಪಾಳೆಯದಿಂದ ಹೊರಗಿರಲಿ. ಅನಂತರ ಅವಳನ್ನು ನೀನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು,” ಎಂದು ಉತ್ತರಕೊಟ್ಟರು.</verse>
				<verse number="15">ಹೀಗೆ ಮಿರ್ಯಾಮಳು ಏಳು ದಿವಸ ಪಾಳೆಯದ ಹೊರಗೆ ಇರಬೇಕಾಯಿತು. ಅವಳನ್ನು ಮರಳಿ ಸೇರಿಸಿಕೊಳ್ಳುವವರೆಗೆ ಇಸ್ರಯೇಲರು ಪ್ರಯಾಣ ಮಾಡಲಿಲ್ಲ.</verse>
				<verse number="16">ಅನಂತರ ಅವರು ಹಚೆರೋತಿನಿಂದ ಹೊರಟು ಪಾರಾನ್ ಮರುಭೂಮಿಯಲ್ಲಿ ಇಳಿದುಕೊಂಡರು.</verse>
			</chapter>
			<chapter number="13">
				<verse number="1">ಸರ್ವೇಶ್ವರ ಸ್ವಾಮಿ ಮೋಶೆಗೆ:</verse>
				<verse number="2">“ನಾನು ಇಸ್ರಯೇಲರಿಗೆ ಕೊಡಲಿರುವ ಕಾನಾನ್ ನಾಡನ್ನು ಸಂಚರಿಸಿ ನೋಡಿಬರಲು ಒಂದೊಂದು ಕುಲದಿಂದ ಒಬ್ಬೊಬ್ಬ ಮುಖ್ಯಸ್ಥನನ್ನು ಕಳಿಸು,” ಎಂದು ಆಜ್ಞಾಪಿಸಿದರು.</verse>
				<verse number="3">ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಪಾರಾನ್ ಮರುಭೂಮಿಯಿಂದ ಇಸ್ರಯೇಲರ ಮುಖ್ಯಸ್ಥರನ್ನು ಕಳಿಸಿದನು.</verse>
				<verse number="4">ಆ ಮುಖ್ಯಸ್ಥರ ಹೆಸರುಗಳು ಇವು - ರೂಬೇನ್ ಕುಲದ ಜಕ್ಕೂರನ ಮಗ ಶಮ್ಮೂವ</verse>
				<verse number="5">ಸಿಮೆಯೋನ್ ಕುಲದ ಹೋರಿಯ ಮಗನದ ಶಾಫಾಟ್</verse>
				<verse number="6">ಯೆಹೂದ ಕುಲದ ಯೆಫುನ್ನೆಯ ಮಗನಾದ ಕಾಲೇಬ</verse>
				<verse number="7">ಇಸ್ಸಾಕಾರ್ ಕುಲದ ಜೋಸೆಫನ ಮಗ ಇಗಾಲ್</verse>
				<verse number="8">ಎಫ್ರಾಯೀಮ್ ಕುಲದ ನೂನನ ಮಗ ಹೋಶೇಯ</verse>
				<verse number="9">ಬೆನ್ಯಾಮೀನ್ ಕುಲದ ರಾಫೂವನ ಮಗ ಪಲ್ಟೀ</verse>
				<verse number="10">ಜೆಬುಲೂನ್ ಕುಲದ ಸೋದಿಯ ಮಗ ಗದ್ದೀಯೇಲ್</verse>
				<verse number="11">ಜೋಸೆಫ್ ಅಂದರೆ ಮನಸ್ಸೆ ಕುಲದ ಸೂಸೀಯ ಮಗ ಗದ್ದೀ</verse>
				<verse number="12">ದಾನ್ ಕುಲದ ಗೆಮಲ್ಲೀಯನ ಮಗ ಅಮ್ಮೀಯೇಲ್</verse>
				<verse number="13">ಅಶೇರ್ ಕುಲದ ಮಿಕಾಯೇಲನ ಮಗ ಸೆತೂರ್</verse>
				<verse number="14">ನಫ್ತಾಲಿ ಕುಲದ ವಾಪೆಸೀಯನ ಮಗ ನಹಬೀ</verse>
				<verse number="15">ಗಾದ್ ಕುಲದ ಮಾಕಿಯನ ಮಗ ಗೆಯೂವೇಲ್</verse>
				<verse number="16">ನಾಡನ್ನು ಸಂಚರಿಸಿ ನೋಡಿಬರುವುದಕ್ಕೆ ಮೋಶೆ ಕಳಿಸಿದ್ದ ವ್ಯಕ್ತಿಗಳ ಹೆಸರುಗಳು ಇವೇ. ಮೋಶೆ ನೂನನ ಮಗ ಹೋಶೇಯನಿಗೆ ‘ಯೆಹೋಶುವ’ ಎಂದು ಹೆಸರಿಟ್ಟನು.</verse>
				<verse number="17">ಕಾನಾನ್ ನಾಡನ್ನು ಸಂಚರಿಸಿ ನೋಡಿ ಬರುವುದಕ್ಕೆ ಅವರನ್ನು ಕಳಿಸುವಾಗ ಮೋಶೆ ಹೀಗೆಂದು ಸಂಬೋಧಿಸಿದನು: “ನೀವು ನೆಗೆಬಾ ಮಾರ್ಗವಾಗಿ ಮಲೆನಾಡಿಗೆ ಹತ್ತಿಹೋಗಿರಿ.</verse>
				<verse number="18">ಆ ನಾಡು ಹೇಗಿದೆ, ಅಲ್ಲಿನ ನಿವಾಸಿಗಳು ಬಲಿಷ್ಠರೋ ಬಲಹೀನರೋ, ಅವರ ಸಂಖ್ಯೆ ದೊಡ್ಡದೋ ಚಿಕ್ಕದೋ</verse>
				<verse number="19">ಅವರ ವಾಸಸ್ಥಳ ಒಳ್ಳೆಯದೋ ಕೆಟ್ಟದೋ, ಅವು ಪಾಳೆಯಗಳೋ ಕೋಟೆಗಳೋ</verse>
				<verse number="20">ಭೂಮಿ ಸಾರವತ್ತಾದುದೋ ನಿಸ್ಸಾರವಾದುದೋ ಮರಗಿಡಗಳಿಂದ ಕೂಡಿದೆಯೋ ಬೈಲುಪ್ರದೇಶವಾಗಿದೆಯೋ ನೋಡಿ ತಿಳಿದುಕೊಳ್ಳಿ. ಅದಲ್ಲದೆ, ಆ ನಾಡಿನ ಉತ್ಪನ್ನಗಳಲ್ಲಿ ಕೆಲವನ್ನು ಪ್ರಯಾಸಪಟ್ಟು ತರಬೇಕು.” ಅದು ದ್ರಾಕ್ಷೆಯ ಪ್ರಥಮ ಫಲಕಾಲವಾಗಿತ್ತು.</verse>
				<verse number="21">ಅವರು ಬೆಟ್ಟವನ್ನು ಹತ್ತಿ ಚಿನ್ ಮರುಭೂಮಿಯಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನವರೆಗೆ ಆ ನಾಡನ್ನು ಸಂಚರಿಸಿ ನೋಡಿದರು.</verse>
				<verse number="22">ಅವರು ಬೆಟ್ಟವನ್ನು ಹತ್ತಿ ನೆಗೆಬನ್ನು ದಾಟಿ, ಹೆಬ್ರೋನಿಗೆ ಬಂದರು. ಅಲ್ಲಿ ‘ಅನಕಿಮ್’ ವಂಶಸ್ಥರಾದ ಅಹೀಮನ್, ಶೇಷೈ, ತಲ್ಮೈ ಎಂಬವರು ಇದ್ದರು. (ಹೆಬ್ರೋನ್ ಪಟ್ಟಣ ಈಜಿಪ್ಟ್ ದೇಶದಲ್ಲಿರುವ ಚೋಮ್ ಪಟ್ಟಣಕ್ಕಿಂತ ಏಳು ವರ್ಷ ಮೊದಲೆ ಕಟ್ಟಲ್ಪಟ್ಟಿತ್ತು)</verse>
				<verse number="23">ಎಷ್ಕೋಲ್ ಎಂಬ ತಗ್ಗಿಗೆ ಬಂದು ಅಲ್ಲಿ ದ್ರಾಕ್ಷಿ ಹಣ್ಣಿನ ಗೊಂಚಲಿದ್ದ ಒಂದು ಕೊಂಬೆಯನ್ನು ಕೊಯ್ದರು. ಅದನ್ನು ಅಡ್ಡದಂಡಿಗೆಯಲ್ಲಿ ಇಬ್ಬರು ಹೊತ್ತು ತಂದರು. ಕೆಲವು ದಾಳಿಂಬೆ ಹಣ್ಣುಗಳನ್ನೂ ಅಂಜೂರದ ಹಣ್ಣುಗಳನ್ನು ತಂದರು.</verse>
				<verse number="24">ಇಸ್ರಯೇಲರು ಅಲ್ಲಿಯೇ ದ್ರಾಕ್ಷಿಯ ಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ‘ಎಷ್ಕೋಲ್’ ಎಂದು ಹೆಸರಾಯಿತು.</verse>
				<verse number="25">ನಾಲ್ವತ್ತು ದಿವಸ ಆ ನಾಡನ್ನು ಸಂಚರಿಸಿ ನೋಡಿ ಆದಮೇಲೆ ಅವರು ಹಿಂದಿರುಗಿ ಬಂದರು.</verse>
				<verse number="26">ಪಾರಾನ್ ಮರುಭೂಮಿಯ ಕಾದೇಶಿನಲ್ಲಿದ್ದ ಮೋಶೆ, ಆರೋನ್ ಹಾಗೂ ಇಸ್ರಯೇಲ್ ಜನಸಮೂಹದ ಬಳಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ನಾಡಿನ ಹಣ್ಣುಗಳನ್ನು ತೋರಿಸಿದರು.</verse>
				<verse number="27">ಮೋಶೆಗೆ, “ನೀವು ನಮ್ಮನ್ನು ಕಳಿಸಿದ ನಾಡಿಗೆ ಹೋಗಿದ್ದೆವು. ಅದು ಹಾಲು-ಜೇನು ಹರಿಯುವಂಥ ನಾಡು. ಅಲ್ಲಿನ ಹಣ್ಣುಹಂಪಲುಗಳು ಇಂಥವು.</verse>
				<verse number="28">ಅಂತೆಯೇ ಆ ನಾಡಿನ ನಿವಾಸಿಗಳು ಬಲಿಷ್ಠರು. ಅವರಿರುವ ಪಟ್ಟಣಗಳು ದೊಡ್ಡವು; ಅವು ಕೋಟೆ ಕೊತ್ತಲುಗಳಿಂದ ಕೂಡಿವೆ. ಅದೂ ಅಲ್ಲದೆ ಅಲ್ಲಿ ‘ಅನಕಿಮ್’ ವಂಶಸ್ಥರನ್ನು ಕಂಡೆವು.</verse>
				<verse number="29">ದಕ್ಷಿಣ ಪ್ರಾಂತದಲ್ಲಿ ಅಮಾಲೇಕ್ಯರು, ಮಲೆನಾಡಿನಲ್ಲಿ ಹಿತ್ತಿಯರು ಯೆಬೂಸಿಯರು ಹಾಗು ಅಮೋರಿಯರು ಮತ್ತು ಸಮುದ್ರ ತೀರದಲ್ಲಿ ಹಾಗೂ ಜೋರ್ಡನ್ ನದಿಯ ಪರಿಸರದಲ್ಲಿ ಕಾನಾನ್ಯರು ವಾಸವಾಗಿದ್ದಾರೆ,” ಎಂದು ವರದಿ ಮಾಡಿದರು.</verse>
				<verse number="30">ಮೋಶೆಗೆ ವಿರುದ್ಧ ಗುಣಗುಟ್ಟುತ್ತಿದ್ದವರನ್ನು ಕಾಲೇಬನು ಸಮಾಧಾನಗೊಳಿಸುತ್ತಾ, “ನಾವು ಧೈರ್ಯದಿಂದ ಆ ಮಲೆನಾಡಿಗೆ ಹೋಗಿ ಅದನ್ನು ಸ್ವಾಧೀನ ಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಮ್ಮಿಂದ ಸಾಧ್ಯ,” ಎಂದನು.</verse>
				<verse number="31">ಆದರೆ ಅವನ ಜೊತೆಯಲ್ಲಿ ಹೋಗಿದ್ದವರು, “ಆ ಜನರು ನಮಗಿಂತ ಬಲಿಷ್ಠರು! ಅವರ ಮೇಲೆ ಜಯ ಸಾಧಿಸಲು ನಮಗೆ ಶಕ್ತಿ ಸಾಲದು,” ಎಂದರು.</verse>
				<verse number="32">ಅದಲ್ಲದೆ ತಾವು ಸಂಚರಿಸಿ ನೋಡಿ ಬಂದ ನಾಡಿನ ವಿಷಯವಾಗಿ ಇಸ್ರಯೇಲರಿಗೆ ಅಶುಭ ಸಮಾಚಾರವನ್ನೇ ಹೇಳುವವರಾದರು. “ನಾವು ಸಂಚಾರಮಾಡಿ ನೋಡಿ ಬಂದ ನಾಡು ತನ್ನಲ್ಲಿ ವಾಸಿಸುವವರನ್ನೇ ಕಬಳಿಸುವಂತಿದೆ. ನಾವು ಅಲ್ಲಿ ನೋಡಿದ ಜನರೆಲ್ಲರು ಬಹು ಎತ್ತರವಾದ ವ್ಯಕ್ತಿಗಳು.</verse>
				<verse number="33">ಅಲ್ಲಿ ‘ನೆಫೀಲಿಯರನ್ನು’ ಅಂದರೆ ನೆಫೀಲಿಯನ ವಂಶದವರಾದ ‘ಅನಕಿಮ್’ರನ್ನು ನೋಡಿದೆವು. ಅವರ ಮುಂದೆ ನಾವು ಮಿಡತೆಗಳಂತೆ ಇದ್ದೆವು. ಅವರಿಗೂ ನಾವು ಹಾಗೆಯೆ ಕಾಣಿಸಿಕೊಂಡೆವು,” ಎಂದರು.</verse>
			</chapter>
			<chapter number="14">
				<verse number="1">ಜನರೆಲ್ಲರು, ಈ ವರದಿಯನ್ನು ಕೇಳಿ ಗಟ್ಟಿಯಾಗಿ ಗೋಳಿಟ್ಟರು. ರಾತ್ರಿಯೆಲ್ಲಾ ಅಳುತ್ತಿದ್ದರು.</verse>
				<verse number="2">ಇಸ್ರಯೇಲರೆಲ್ಲರು ಮೋಶೆ ಮತ್ತು ಆರೋನರ ವಿರುದ್ಧ ಗುಣಗುಟ್ಟಿದರು. “ಈಜಿಪ್ಟಿನಲ್ಲೇ ನಾವು ಸತ್ತಿದ್ದರೆ ಚೆನ್ನಾಗಿತ್ತು.</verse>
				<verse number="3">ಕತ್ತಿಯ ಬಾಯಿಗೆ ತುತ್ತಾಗಿಸಲು ಸರ್ವೇಶ್ವರ ಸ್ವಾಮಿ ನಮ್ಮನ್ನೇಕೆ ಈ ನಾಡಿಗೆ ಬರಮಾಡಿದರು? ನಮ್ಮ ಮಡದಿ ಮಕ್ಕಳು ಪರರ ಪಾಲಾಗುವರಲ್ಲಾ? ನಾವು ಮರಳಿ ಈಜಿಪ್ಟ್ ದೇಶಕ್ಕೆ ಹೋಗುವುದೇ ಒಳಿತಲ್ಲವೆ?” ಎಂದು ಹೇಳಿಕೊಂಡರು.</verse>
				<verse number="4">“ಒಬ್ಬ ನಾಯಕನನ್ನು ನೇಮಿಸಿಕೊಂಡು ಈಜಿಪ್ಟಿಗೆ ಹಿಂತಿರುಗಿ ಹೋಗೋಣ,” ಎಂದೂ ಒಬ್ಬರಿಗೊಬ್ಬರು ಮಾತಾಡಿಕೊಂಡರು.</verse>
				<verse number="5">ಆಗ ಮೋಶೆ ಮತ್ತು ಆರೋನರು ಇಸ್ರಯೇಲರ ಸರ್ವಸಮೂಹದ ಮುಂದೆ ಅಡ್ಡಬಿದ್ದರು.</verse>
				<verse number="6">ಅಲ್ಲದೆ ನಾಡನ್ನು ಸಂಚರಿಸಿ ನೋಡಿ ಬಂದವರಲ್ಲಿ ನೂನನ ಮಗ ಯೆಹೋಶುವನು ಮತ್ತು ಯೆಫುನ್ನೆಯ ಮಗ ಕಾಲೇಬನು ಸಿಟ್ಟಿನಿಂದ ತಮ್ಮ ಬಟ್ಟೆಗಳನ್ನೇ ಹರಿದುಕೊಂಡು,</verse>
				<verse number="7">ಇಸ್ರಯೇಲರ ಸರ್ವಸಮೂಹದವರಿಗೆ ಹೀಗೆಂದರು: “ನಾವು ಸಂಚರಿಸಿ ನೋಡಿಬಂದ ನಾಡು ಅತ್ಯುತ್ತಮವಾದುದು;</verse>
				<verse number="8">ಹಾಲೂ ಜೇನೂ ಹರಿಯುವ ನಾಡದು! ಸರ್ವೇಶ್ವರನಿಗೆ ಮೆಚ್ಚುಗೆಯಾದರೆ ಅದರಲ್ಲಿ ನಮ್ಮನ್ನು ಸೇರಿಸುವರು, ಅದನ್ನೇ ನಮ್ಮ ಸ್ವಾಧೀನಕ್ಕೆ ಕೊಡುವರು.</verse>
				<verse number="9">ಆದ್ದರಿಂದ ಸರ್ವೇಶ್ವರನಿಗೆ ವಿರುದ್ಧ ದಂಗೆ ಏಳಬೇಡಿ. ಆ ನಾಡಿನ ಜನರಿಗೆ ದಿಗಿಲುಪಡಬೇಡಿ. ಅವರು ನಮಗೆ ತುತ್ತಾಗುವರು. ನಾವು ಪುಷ್ಠಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ. ಸರ್ವೇಶ್ವರ ನಮ್ಮ ಕಡೆ ಇದ್ದಾರೆ. ಅವರಿಗೆ ಭಯಪಡಬೇಡಿ”</verse>
				<verse number="10">ಆದರೆ ಜನಸಂದಣಿ ಅವರಿಗೆ ಕಿವಿಗೊಡಲೊಲ್ಲದೆ ಕಲ್ಲೆಸೆದು ಅವರನ್ನು ಕೊಲ್ಲಬೇಕೆಂದಿದ್ದರು. ಆಗ ಸರ್ವೇಶ್ವರನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಹೊಳೆದು ಇಸ್ರಯೇಲರೆಲ್ಲರಿಗೂ ಕಾಣಿಸಿಕೊಂಡಿತು.</verse>
				<verse number="11">ಮೋಶೆಗೆ ಸರ್ವೇಶ್ವರ, “ಇನ್ನೆಷ್ಟುಕಾಲ ಈ ಜನರು ನನ್ನನ್ನು ಅಲಕ್ಷ್ಯ ಮಾಡುವರು? ನಾನು ಮಾಡಿದ ಮಹತ್ಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಇನ್ನೆಷ್ಟು ಕಾಲ ನಂಬದೆ ಇರುವರು?</verse>
				<verse number="12">ಆಗಲಿ, ನಾನು ಇವರಿಗೆ ದೊಡ್ಡ ರೋಗವನ್ನು ಬರಮಾಡಿ ಇವರನ್ನು ನಿರ್ಮೂಲ ಮಾಡಿಬಿಡುತ್ತೇನೆ; ಇವರಿಗಿಂತ ದೊಡ್ಡದೂ ಬಲಿಷ್ಠವೂ ಆದ ಜನಾಂಗವೊಂದನ್ನು ನಿನ್ನಿಂದಲೇ ಹುಟ್ಟಿಸುವೆನು,” ಎಂದು ಹೇಳಿದರು.</verse>
				<verse number="13">ಅದಕ್ಕೆ ಮೋಶೆ: “ನೀವು ಹಾಗೆ ಮಾಡುವುದಾದರೆ ಈಜಿಪ್ಟಿನವರು ಈ ಸಮಾಚಾರವನ್ನು ಕೇಳುವರು. ಅವರ ಕೈಯಿಂದ ನೀವು ಈ ಜನರನ್ನು ಭುಜಪರಾಕ್ರಮದಿಂದ ಬಿಡಿಸಿದ ಸಂಗತಿಯನ್ನು ಈ ಕಾನಾನ್ ನಾಡಿನ ನಿವಾಸಿಗಳಿಗೆ ತಿಳಿಸುವರು.</verse>
				<verse number="14">ಅಲ್ಲದೆ ಸರ್ವೇಶ್ವರಾ, ನೀವು ಇಸ್ರಯೇಲರ ನಡುವೆ ಇರುವುದಾಗಿ, ನೀವು ಇಸ್ರಯೇಲರಿಗೆ ಪ್ರತ್ಯಕ್ಷ ಕಾಣಿಸಿಕೊಳ್ಳುವುದಾಗಿ, ಹಗಲಿನಲ್ಲಿ ಮೇಘಸ್ತಂಭದಲ್ಲೂ, ಇರುಳಲ್ಲಿ ಅಗ್ನಿಸ್ತಂಭದಲ್ಲೂ ಇದ್ದು ಇವರ ಮುಂದೆ ನಡೆದು ಹೋಗುವುದಾಗಿ ಹಾಗೂ ನೀವಿರುವ ಮೇಘ ಇಸ್ರಯೇಲರ ಮೇಲೆ ಇರುವುದಾಗಿ ಈ ನಾಡಿನವರು ಕೇಳಿದ್ದಾರೆ.</verse>
				<verse number="15">ಹೀಗಿರಲಾಗಿ ನೀವು ಒಂದೇ ಪೆಟ್ಟಿನಿಂದ ಈ ಜನರನ್ನೆಲ್ಲಾ ಸಾಯಿಸಿದರೆ ನಿಮ್ಮ ಪ್ರಖ್ಯಾತಿಯನ್ನು ಕೇಳಿದ ಜನಾಂಗಗಳವರು ನಿಮಗೆ ವಿರುದ್ಧ ಮಾತಾಡಿಕೊಳ್ಳುವರು:</verse>
				<verse number="16">‘ಸರ್ವೇಶ್ವರ ಪ್ರಮಾಣ ಪೂರ್ವಕವಾಗಿ ವಾಗ್ದಾನ ಮಾಡಿದ ನಾಡಿಗೆ ತನ್ನ ಜನರನ್ನು ಸೇರಿಸಲು ಶಕ್ತಿ ಸಾಲದೆ ಹೋಯಿತು; ಅವರನ್ನು ಮರುಭೂಮಿಯಲ್ಲೇ ಕೊಂದುಹಾಕಿಬಿಟ್ಟ’ ಎಂದುಕೊಳ್ಳುವರು.</verse>
				<verse number="17">ಆದ್ದರಿಂದ ಪ್ರಭೂ, ನಿಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿರಿ; ಹಿಂದೆ ನೀವು ನಿಮ್ಮ ವಿಷಯದಲ್ಲಿ:</verse>
				<verse number="18">‘ಸರ್ವೇಶ್ವರ ದೀರ್ಘಶಾಂತನು, ಪ್ರೀತಿಮಯನು, ಪಾಪ-ಅಪರಾಧಗಳನ್ನು ಕ್ಷಮಿಸುವವನು, ಆದರೂ ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು,’ ಎಂದು ಹೇಳಿದ್ದೀರಿ. ಆ ಮಾತನ್ನು ನೆನಪಿಗೆ ತಂದುಕೊಳ್ಳಿ.</verse>
				<verse number="19">ನಾವು ಈಜಿಪ್ಟ್ ದೇಶವನ್ನು ಬಿಟ್ಟು ಬಂದ ದಿನದಿಂದ ಇಂದಿನವರೆಗೆ ಈ ಜನರ ಪಾಪಗಳನ್ನು ಕ್ಷಮಿಸಿದ್ದೀರಿ. ಅದೇ ಪ್ರಕಾರ ಈಗಲೂ ಮಹಾಕೃಪೆಯಿಂದ ಇವರ ಪಾಪವನ್ನು ಕ್ಷಮಿಸಬೇಕೆಂದು ಬೇಡಿಕೊಳ್ಳುತ್ತೇನೆ,” ಎಂದು ಪ್ರಾರ್ಥಿಸಿದನು.</verse>
				<verse number="20">ಅದಕ್ಕೆ ಸರ್ವೇಶ್ವರ, “ನಿನ್ನ ಪ್ರಾರ್ಥನೆಯ ಮೇರೆಗೆ ನಾನು ಕ್ಷಮಿಸಿದ್ದೇನೆ.</verse>
				<verse number="21">ಆದರೂ ನನ್ನ ಜೀವದಾಣೆ ಸರ್ವೇಶ್ವರನ ಮಹಿಮೆ ಅಖಿಲ ವಿಶ್ವವನ್ನು ತುಂಬಿದೆಯೆಂಬ ಸತ್ಯವಾಕ್ಯದ ಆಣೆ. ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ವಾಗ್ದತ್ತ ನಾಡನ್ನು ನೋಡುವುದಿಲ್ಲ.</verse>
				<verse number="22">ಈಜಿಪ್ಟ್ ದೇಶದಲ್ಲೂ ಮರುಭೂಮಿಯಲ್ಲೂ ನಾನು ಮಾಡಿದ ಮಹತ್ಕಾರ್ಯಗಳನ್ನು ಹಾಗೂ ನನ್ನ ಅಸ್ತಿತ್ವದ ತೇಜಸ್ಸನ್ನು ಈ ಮಾನವರೆಲ್ಲರೂ ನೋಡಿದ್ದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ. ಬದಲಿಗೆ ನನ್ನನ್ನು ಪದೇ ಪದೇ ಪರೀಕ್ಷಿಸಿದ್ದಾರೆ.</verse>
				<verse number="23">ಆದ್ದರಿಂದ ಇವರ ಪೂರ್ವಜರಿಗೆ ಪ್ರಮಾಣಪೂರ್ವಕವಾಗಿ ನಾನು ವಾಗ್ದಾನ ಮಾಡಿದ ಆ ನಾಡನ್ನು ಇವರಾರು ನೋಡುವುದಿಲ್ಲ.</verse>
				<verse number="24">ನನ್ನ ದಾಸನಾದ ಕಾಲೇಬನಾದರೋ ಅವರಂಥ ಮನಸ್ಸುಳ್ಳವನಾಗಿರದೆ ಮನಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದಿದ್ದಾನೆ. ಆದ್ದರಿಂದ ಅವನು ಸಂಚರಿಸಿ ಬಂದ ಆ ನಾಡಿಗೆ ಅವನನ್ನು ಸೇರಿಸುವೆನು. ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.</verse>
				<verse number="25">(ಅಮಾಲೇಕ್ಯರು ಹಾಗು ಕಾನಾನ್ಯರು ಅದರ ಕಣಿವೆಯಲ್ಲಿ ವಾಸಮಾಡುತ್ತಿದ್ದಾರೆ) ಈ ಕಾರಣ ನೀವು ನಾಳೆ ಹಿಂದಿರುಗಿ ಕೆಂಪುಸಮುದ್ರಕ್ಕೆ ಹೋಗುವ ದಾರಿ ಹಿಡಿದು ಮರುಭೂಮಿಗೆ ಪ್ರಯಾಣ ಮಾಡಬೇಕು,” ಎಂದು ಹೇಳಿದರು.</verse>
				<verse number="26">ಸರ್ವೇಶ್ವರ ಮೋಶೆ ಮತ್ತು ಆರೋನರಿಗೆ:</verse>
				<verse number="27">“ನನಗೆ ವಿರೋಧವಾಗಿ ಗೊಣಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟುಕಾಲ ಸಹಿಸಲಿ! ಈ ಇಸ್ರಯೇಲರು ನನಗೆ ವಿರುದ್ಧ ಗೊಣಗುಟ್ಟುವ ಮಾತುಗಳು ನನಗೆ ಕೇಳಿಸಿವೆ.</verse>
				<verse number="28">ನೀವು ಅವರಿಗೆ ಹೀಗೆ ಹೇಳಬೇಕು: ‘ಸರ್ವೇಶ್ವರ ಹೇಳುವುದೇನೆಂದರೆ - ನನ್ನ ಜೀವದಾಣೆ, ನೀವು ನನಗೆ ಕೇಳಿಸುವಂತೆ ಆಡಿಕೊಂಡ ಪ್ರಕಾರವೇ ನಾನು ಮಾಡುತ್ತೇನೆ.</verse>
				<verse number="29">ನಿಮ್ಮ ಶವಗಳು ಈ ಮರುಭೂಮಿಯಲ್ಲೇ ಬೀಳುವುವು. ನೀವು ನನಗೆ ವಿರೋಧವಾಗಿ ಗೊಣಗಿದ್ದರಿಂದ ನಿಮ್ಮಲ್ಲಿ ಎಣಿಕೆಯಾದವರೆಲ್ಲರೂ ಅಂದರೆ ಇಪ್ಪತ್ತು ವರ್ಷ ಮತ್ತು ಮೇಲ್ಪಟ್ಟ ವಯಸ್ಸುಳ್ಳವರೆಲ್ಲರೂ ಮರುಭೂಮಿಯಲ್ಲೇ ಸಾಯುವರು.</verse>
				<verse number="30">ಯೆಫುನ್ನೆಯ ಮಗ ಕಾಲೇಬ್ ಮತ್ತು ನೂನನ ಮಗ ಯೆಹೋಶುವ ಇವರಿಬ್ಬರೇ ಹೊರತು ನಿಮ್ಮಲ್ಲಿ ಯಾರೂ ನಿಮ್ಮ ನಿವಾಸಕ್ಕಾಗಿ ನಾನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಸೇರುವುದಿಲ್ಲ.</verse>
				<verse number="31">ಆದರೆ ನಿಮ್ಮ ಮಕ್ಕಳನ್ನು, ಪರರ ಪಾಲಾಗುವರು ಎಂದು ಹೇಳಿದ ನಿಮ್ಮ ಚಿಕ್ಕಮಕ್ಕಳನ್ನು ಅಲ್ಲಿಗೆ ಸೇರಿಸುವೆನು. ನೀವು ಬೇಡವೆಂದ ನಾಡನ್ನು ಅವರು ಅನುಭವಿಸುವರು.</verse>
				<verse number="32">ನೀವಾದರೋ ಈ ಮರುಭೂಮಿಯಲ್ಲೇ ಬೀಳುವ ತನಕ</verse>
				<verse number="33">ನಿಮ್ಮ ಮಕ್ಕಳು ನೀವು ಮಾಡಿದ ದ್ರೋಹದ ಫಲವನ್ನು ಅನುಭವಿಸುವವರಾಗಿ ನಾಲ್ವತ್ತು ವರ್ಷ ಮರುಭೂಮಿಯಲ್ಲೇ ಅಲೆದಾಡುವರು.</verse>
				<verse number="34">ನೀವು ಆ ನಾಡನ್ನು ನಾಲ್ವತ್ತು ದಿನಗಳು ಸಂಚರಿಸಿ ನೋಡಿದಿರಿ. ಅಂತೆಯೇ ಒಂದು ದಿನಕ್ಕೆ ಒಂದು ವರ್ಷದ ಮೇರೆಗೆ ನಾಲ್ವತ್ತು ವರ್ಷ ನಿಮ್ಮ ಪಾಪದ ಫಲವನ್ನು ಅನುಭವಿಸಿರಿ; ನಾನು ಕೈಬಿಟ್ಟವರ ಗತಿ ಎಂಥದೆಂದು ತಿಳಿದುಕೊಳ್ಳುವಿರಿ.</verse>
				<verse number="35">ಇದು ಸರ್ವೇಶ್ವರನೆಂಬ ನಾನೇ ಹೇಳಿದ ಮಾತು. ನನಗೆ ವಿರೋಧವಾಗಿ ಒಟ್ಟುಕೂಡಿಕೊಂಡಿರುವ ಈ ದುಷ್ಟಸಮೂಹದವರೆಲ್ಲರಿಗೆ ಈ ಮಾತಿನ ಮೇರೆಗೆ ಮಾಡಿಯೇ ತೀರುವೆನು. ಮರುಭೂಮಿಯಲ್ಲೇ ಅವರೆಲ್ಲರು ಸಾಯಬೇಕು,” ಎಂದು ಹೇಳಿದರು.</verse>
				<verse number="36">ಆ ನಾಡನ್ನು ಸಂಚರಿಸಿ ನೋಡಿಬರುವುದಕ್ಕೆ ಮೋಶೆಯಿಂದ ಕಳಿಸಲಾಗಿದ್ದವರು ಹಿಂದಿರುಗಿ ಬಂದು ಆ ನಾಡಿನ ಬಗ್ಗೆ ಅಶುಭಸಮಾಚಾರವನ್ನು ಹೇಳಿ ಸರ್ವಸಮೂಹದವರನ್ನು ಮೋಶೆಗೆ ವಿರುದ್ಧ ಗೊಣಗುವಂತೆ ಮಾಡಿದ್ದರು.</verse>
				<verse number="37">ಅಂಥ ವ್ಯಕ್ತಿಗಳು ಸರ್ವೇಶ್ವರನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.</verse>
				<verse number="38">ಅವರಲ್ಲಿ ನೂನನ ಮಗ ಯೆಹೋಶುವನು ಮತ್ತು ಯೆಫುನ್ನೆಯ ಮಗ ಕಾಲೇಬನು ಉಳಿದುಕೊಂಡರು.</verse>
				<verse number="39">ಮೋಶೆ ಸರ್ವೇಶ್ವರನ ಮಾತುಗಳನ್ನೆಲ್ಲಾ ಇಸ್ರಯೇಲರಿಗೆ ತಿಳಿಸಿದನು. ಅವರು ಬಹಳವಾಗಿ ವ್ಯಸನಪಟ್ಟರು.</verse>
				<verse number="40">ಮಾರನೆಯ ದಿನ ಬೆಳಿಗ್ಗೆ ಜನರು ಎದ್ದು, “ನಾವು ಪಾಪ ಮಾಡಿರುವುದೇನೋ ನಿಜ; ಸರ್ವೇಶ್ವರ ವಾಗ್ದಾನ ಮಾಡಿದ ಸ್ಥಳಕ್ಕೆ ಏರಿಹೋಗೋಣ ಬನ್ನಿ,” ಎಂದು ಹೇಳಿಕೊಳ್ಳುತ್ತಾ ಆ ಬೆಟ್ಟದ ಮೇಲಕ್ಕೆ ಹತ್ತಿಹೋಗಲಾರಂಭಿಸಿದರು.</verse>
				<verse number="41">ಆದರೆ ಮೋಶೆ ಅವರಿಗೆ, “ಸರ್ವೇಶ್ವರನ ಆಜ್ಞೆಯನ್ನು ಏಕೆ ಮೀರುತ್ತೀರಿ? ಇದು ಕೈಗೂಡುವುದಿಲ್ಲ.</verse>
				<verse number="42">ಸರ್ವೇಶ್ವರ ನಿಮ್ಮ ಸಂಗಡ ಇಲ್ಲ, ಹತ್ತಬೇಡಿ. ನೀವು ಶತ್ರುಗಳ ಮುಂದೆ ನಿಲ್ಲಲಾರಿರಿ, ಬಿದ್ದು ಸತ್ತುಹೋಗುವಿರಿ.</verse>
				<verse number="43">ಅಲ್ಲಿ ಅಮಾಲೇಕ್ಯರು ಹಾಗೂ ಕಾನಾನ್ಯರು ನಿಮಗೆ ಎದುರಾಗುವರು; ನೀವು ಅವರ ಕತ್ತಿಗೆ ತುತ್ತಾಗುವಿರಿ. ನೀವು ಸರ್ವೇಶ್ವರನ ಮಾತನ್ನು ಅನುಸರಿಸದೆ ಪ್ರತಿಭಟಿಸಿದ್ದೀರಿ. ಕತ್ತಿಗೆ ತುತ್ತಾಗುವಿರಿ. ಈ ಕಾರಣ ಅವರು ನಿಮ್ಮೊಂದಿಗೆ ಇರುವುದಿಲ್ಲ,” ಎಂದು ಹೇಳಿದನು.</verse>
				<verse number="44">ಆದರೂ ಅವರು ಹಟಮಾಡಿ ಆ ಬೆಟ್ಟವನ್ನು ಹತ್ತೇಹತ್ತಿದರು. ಸರ್ವೇಶ್ವರನ ಒಡಂಬಡಿಕೆಯಾದ ಮಂಜೂಷವಾಗಲಿ, ಮೋಶೆಯಾಗಲಿ ಪಾಳೆಯನ್ನು ಬಿಟ್ಟು ಹೊರಡಲಿಲ್ಲ.</verse>
				<verse number="45">ಆ ಮಲೆನಾಡಿನಲ್ಲಿ ವಾಸವಾಗಿದ್ದ ಅಮಾಲೇಕ್ಯರು ಹಾಗೂ ಕಾನಾನ್ಯರು ಇಳಿದುಬಂದು ಅವರನ್ನು ಹೊಡೆದು ಹೊರ್ಮಾ ಪಟ್ಟಣದವರೆಗೂ ಬೆನ್ನಟ್ಟಿ ಬಂದು ಸಂಹರಿಸಿದರು.</verse>
			</chapter>
			<chapter number="15">
				<verse number="1">ಸರ್ವೇಶ್ವರ ಸ್ವಾಮಿ ಮೋಶೆಗೆ:</verse>
				<verse number="2">“ನೀನು ಇಸ್ರಯೇಲರಿಗೆ ಹೀಗೆಂದು ಹೇಳು: ‘ನಿಮ್ಮ ನಿವಾಸಕ್ಕಾಗಿ ನಾನು ಕೊಡುವ ನಾಡಿಗೆ ನೀವು ಬಂದು ಸೇರಿದ ನಂತರ</verse>
				<verse number="3">ಸರ್ವೇಶ್ವರನಾದ ನನಗೆ ಸುವಾಸನೆಯ ಕಾಣಿಕೆಯಾಗಿ ದನಕರುಗಳಿಂದ ಬಲಿಯನ್ನು ಅರ್ಪಿಸುವಾಗ ಅದು ಹರಕೆಯ, ಕೃತಜ್ಞತೆಯ ಹಬ್ಬಾಚರಣೆಯ, ಶಾಂತಿಸಮಾಧಾನದ ಬಲಿಯಾಗಿರಲಿ ಅಥವಾ ದಹನಬಲಿಯಾಗಿರಲಿ.</verse>
				<verse number="4">ಆ ಬಲಿಪ್ರಾಣಿಯೊಂದಿಗೆ ಧಾನ್ಯನೈವೇದ್ಯಕ್ಕಾಗಿ ಒಂದೂವರೆ ಸೇರು ಎಣ್ಣೆ ಬೆರೆಸಿದ ಮೂರು ಸೇರು ಗೋದಿಯ ಹಿಟ್ಟನ್ನು ತರಬೇಕು.</verse>
				<verse number="5">ಮತ್ತು ಪಾನದ್ರವ್ಯಕ್ಕಾಗಿ ಒಂದೂವರೆ ಸೇರು ದ್ರಾಕ್ಷಾರಸವನ್ನೂ ತರಬೇಕು. ನೀವು ದಹನಬಲಿದಾನವಾಗಿ ಇಲ್ಲವೆ ಸಮಾಧಾನ ಬಲಿಯಾಗಿ ಸಮರ್ಪಿಸುವ ಒಂದೊಂದು ಕುರಿಯೊಂದಿಗೆ ಇದನ್ನು ಸಮರ್ಪಿಸಬೇಕು.</verse>
				<verse number="6">“ಸರ್ವೇಶ್ವರನಾದ ನನಗೆ ಸುವಾಸನೆ ಕಾಣಿಕೆಯಾಗಿ ಟಗರನ್ನು ಅರ್ಪಿಸುವಾಗ ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರೆಸಿದ ಆರುಸೇರು ಗೋದಿಯ ಹಿಟ್ಟನ್ನು ಅರ್ಪಿಸಬೇಕು;</verse>
				<verse number="7">ಮತ್ತು ಪಾನದ್ರವ್ಯಕ್ಕಾಗಿ ಎರಡು ಸೇರು ದ್ರಾಕ್ಷಾರಸವನ್ನು ಸಮರ್ಪಿಸಬೇಕು.</verse>
				<verse number="8">‘ನೀವು ಅರ್ಪಿಸುವಂಥದ್ದು ಹೋರಿಯಾಗಿದ್ದರೆ, ಅದು ಸರ್ವಾಂಗಹೋಮವೇ ಆಗಿರಲಿ ಅಥವಾ ಹರಕೆಯ ಹಾಗೂ ಬೇರೆ ವಿಧವಾದ ಬಲಿಯೇ ಆಗಿರಲಿ,</verse>
				<verse number="9">ಆಗ ನೀವು ‘ಆ ಬಲಿಪ್ರಾಣಿಯೊಂದಿಗೆ ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರೆಸಿದ ಒಂಬತ್ತು ಸೇರು ಗೋದಿಯ ಹಿಟ್ಟನ್ನು ಅರ್ಪಿಸಬೇಕು.</verse>
				<verse number="10">ಮತ್ತು ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನು ತಂದು ಸಮರ್ಪಿಸಬೇಕು. ಇದು ಸರ್ವೇಶ್ವರನಾದ ನನಗೆ ಪ್ರಿಯವಾದ ಸುಗಂಧ ದಹನಬಲಿಯಾಗುವುದು.</verse>
				<verse number="11">‘ಕುರಿ, ಆಡು, ಟಗರು, ಹೋರಿ - ಇವುಗಳಲ್ಲಿ ಪ್ರತಿಯೊಂದು ಬಲಿಪ್ರಾಣಿಯ ಸಂಗಡ ನೀವು ಈ ಮೇರೆಗೆ ನೈವೇದ್ಯಮಾಡಬೇಕು.</verse>
				<verse number="12">ನೀವು ಸಮರ್ಪಿಸುವ ಬಲಿಪ್ರಾಣಿಗಳ ಸಂಖ್ಯಾನುಸಾರ ಒಂದೊಂದು ಪ್ರಾಣಿಯ ಸಮೇತ ಹೀಗೆಯೇ ಮಾಡಬೇಕು.</verse>
				<verse number="13">ಸ್ವದೇಶದವರೆಲ್ಲರೂ ಸರ್ವೇಶ್ವರನಿಗೆ ಸುಗಂಧಬಲಿಯನ್ನು ಸಮರ್ಪಿಸುವಾಗ ಈ ರೀತಿಯಾಗಿಯೇ ಮಾಡಬೇಕು.</verse>
				<verse number="14">ನಿಮ್ಮ ಮಧ್ಯೆ, ಇಲ್ಲವೆ ನಿಮ್ಮ ಸಂತತಿಯವರ ಮಧ್ಯೆ ವಾಸಿಸುವ ಅನ್ಯದೇಶೀಯನಾಗಲಿ ಪ್ರವಾಸಿಯಾಗಲಿ ಸುಗಂಧ ದಹನಬಲಿಯನ್ನು ಅರ್ಪಿಸಲಾಶಿಸಿದರೆ ನಿಮ್ಮಂತೆಯೇ ಅವನೂ ಮಾಡಬೇಕು.</verse>
				<verse number="15">ಸರ್ವರಿಗೂ ಅಂದರೆ ನಿಮಗೂ ನಿಮ್ಮಲ್ಲಿರುವ ಅನ್ಯದೇಶೀಯರಿಗೂ ಒಂದೇ ವಿಧಿಯಿರಬೇಕು. ಇದು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ. ಸರ್ವೇಶ್ವರನ ಸನ್ನಿಧಿಯಲ್ಲಿ ನೀವು ಹೇಗೆ ಇರುವಿರೋ ಹಾಗೆಯೇ ಅನ್ಯದೇಶೀಯನೂ ಇರುವನು.</verse>
				<verse number="16">ನಿಮಗೂ ನಿಮ್ಮಲ್ಲಿ ವಾಸಿಸುವ ವಿದೇಶೀಯನಿಗೂ ಒಂದೇ ವಿಧಿ, ಒಂದೇ ನಿಯಮ ಇರಬೇಕು,’ ಎಂದರು.</verse>
				<verse number="17">ಸರ್ವೇಶ್ವರ ಮೋಶೆಗೆ:</verse>
				<verse number="18">“ನೀನು ಇಸ್ರಯೇಲರಿಗೆ ಹೀಗೆ ಆಜ್ಞಾಪಿಸು: ‘ನಾನು ನಿಮ್ಮನ್ನು ಕರೆದುಕೊಂಡು ಹೋಗುವ ನಾಡಿಗೆ ನೀವು ಸೇರಿದ ನಂತರ</verse>
				<verse number="19">ಆ ಭೂಮಿಯ ಬೆಳೆಯನ್ನು ಅನುಭವಿಸುವಾಗ ಅದರಲ್ಲಿ ಸ್ವಲ್ಪವನ್ನು ಸರ್ವೇಶ್ವರನಿಗೆ ಮೀಸಲಾಗಿಡಬೇಕು.</verse>
				<verse number="20">ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಕಿಂಚಿತ್ತನ್ನು ಸರ್ವೇಶ್ವರನಿಗೆಂದು ಮೀಸಲಾಗಿಡುವಂತೆಯೆ ಆ ಕಣಕದಿಂದ ಮಾಡುವ ಮೊದಲ ರೊಟ್ಟಿಯನ್ನು ಮೀಸಲಾಗಿಡಬೇಕು.</verse>
				<verse number="21">ನೀವು ಹಾಗು ನಿಮ್ಮ ಸಂತತಿಯವರು ಹೀಗೆ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಸರ್ವೇಶ್ವರನಿಗೆ ಮೀಸಲಾಗಿಡಬೇಕು.” ಎಂದರು.</verse>
				<verse number="22">ಸರ್ವೇಶ್ವರ ಸ್ವಾಮಿ ಮೋಶೆಯ ಮುಖಾಂತರ ಕೊಟ್ಟ ಈ ಆಜ್ಞೆಗಳಲ್ಲಿ ಒಂದನ್ನು, ಒಬ್ಬನು ತಿಳಿಯದೆ ಮೀರಿ ನಡೆಯಲು ಸಾಧ್ಯ.</verse>
				<verse number="23">ಅಂತೆಯೇ ಮುಂಬರುವ ಕಾಲದಲ್ಲಿ ಎಂದಾದರೂ ಒಂದು ಸಭೆ ಇವುಗಳಲ್ಲಿ ಒಂದನ್ನು ಮೀರಿ ದೋಷಿಯಾಗಲು ಸಾಧ್ಯ.</verse>
				<verse number="24">ಆಗ ಅವರೆಲ್ಲರು ಒಟ್ಟಿಗೆ ಸೇರಿ ಸರ್ವೇಶ್ವರನಿಗೆ ಸುಗಂಧ ಕಾಣಿಕೆಯಾಗಿ ಹಾಗೂ ದಹನಬಲಿಯಾಗಿ ಒಂದು ಹೋರಿಯನ್ನು ಅರ್ಪಿಸಬೇಕು; ನೈವೇದ್ಯವಾಗಿ ನಿಯಮಿತ ಧಾನ್ಯದ್ರವ್ಯಗಳನ್ನು ಹಾಗೂ ಪಾನದ್ರವ್ಯಗಳನ್ನೂ ಅರ್ಪಿಸಬೇಕು; ಅಲ್ಲದೆ ದೋಷಪರಿಹಾರಕ ಬಲಿಯಾಗಿ ಒಂದು ಹೋತವನ್ನು ಸಮರ್ಪಿಸಬೇಕು.</verse>
				<verse number="25">ಹೀಗೆ ಯಾಜಕನು ಇಸ್ರಯೇಲರ ಸರ್ವಸಮೂಹದವರ ಪರವಾಗಿ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆ ದೊರಕುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ ಮತ್ತು ಅವರು ಅದರ ಪರಿಹಾರಕ್ಕಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿಯನ್ನೂ ದೋಷಪರಿಹಾರಕಬಲಿಯನ್ನೂ ಅರ್ಪಿಸಿದ್ದರಿಂದ ಕ್ಷಮೆ ಲಭಿಸುವುದು.</verse>
				<verse number="26">ಇಸ್ರಯೇಲರ ಸರ್ವಸಭೆಯವರಿಗೂ ಅವರ ಮಧ್ಯೆ ವಾಸಿಸುವ ವಿದೇಶೀಯರಿಗೂ ಅವರೆಲ್ಲರೂ ತಿಳಿಯದೆ ಮಾಡಿದ ತಪ್ಪಿಗೆ ಕ್ಷಮೆ ಲಭಿಸುವುದು.</verse>
				<verse number="27">ಯಾವನಾದರೂ ಒಬ್ಬನು ವೈಯಕ್ತಿಕವಾಗಿ ತಿಳಿಯದೆ ತಪ್ಪು ಮಾಡಿದರೆ ಅಂಥವನು ದೋಷಪರಿಹಾರಕ ಬಲಿಗಾಗಿ ಒಂದು ವರ್ಷದ ಆಡನ್ನು ಸಮರ್ಪಿಸಬೇಕು.</verse>
				<verse number="28">ತಿಳಿಯದೆ ತಪ್ಪುಮಾಡಿದ ಅಂಥವನ ಪರವಾಗಿ ಯಾಜಕನು ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರಕ ವಿಧಿಯನ್ನು ನೆರವೇರಿಸಿದರೆ ಅವನಿಗೆ ಕ್ಷಮೆ ದೊರಕುವುದು.</verse>
				<verse number="29">ಈ ಬಗ್ಗೆ ಇಸ್ರಯೇಲರಲ್ಲಿರುವ ಸ್ವದೇಶೀಯರಿಗೂ ವಿದೇಶೀಯರಿಗೂ ಒಂದೇ ವಿಧಿಯಿರಬೇಕು.</verse>
				<verse number="30">ಆದರೆ ಒಬ್ಬನು ಸ್ವದೇಶದವನೇ ಆಗಲಿ ವಿದೇಶದವನೇ ಆಗಲಿ ಮನಪೂರ್ವಕವಾಗಿ, ಬೇಕು ಬೇಕೆಂದು ಪಾಪವನ್ನು ಮಾಡಿದರೆ ಅಂಥವನನ್ನು ಕುಲದಿಂದ ತೆಗೆದುಹಾಕಬೇಕು. ಏಕೆಂದರೆ ಅವನು ಸರ್ವೇಶ್ವರನನ್ನು ತೃಣೀಕರಿಸಿದ್ದಾನೆ.</verse>
				<verse number="31">ಸರ್ವೇಶ್ವರನ ಮಾತನ್ನು ತಾತ್ಸಾರ ಮಾಡಿ, ಅವರ ಆಜ್ಞೆಯನ್ನು ಉಲ್ಲಂಘಿಸಿದ್ದರಿಂದ ಅಂಥವನಿಗೆ ಬಹಿಷ್ಕಾರ ಹಾಕಲೇಬೇಕು. ಅವನು ತನ್ನ ಪಾಪದ ದುಷ್ಪಲವನ್ನು ಅನುಭವಿಸುವಂತಾಗಬೇಕು.</verse>
				<verse number="32">ಇಸ್ರಯೇಲರು ಮರುಭೂಮಿಯಲ್ಲಿದ್ದಾಗ ಒಬ್ಬನು ‘ಸಬ್ಬತ್’ ದಿನದಂದು ಸೌದೆ ಕೂಡಿಸುವುದನ್ನು ಕಂಡರು.</verse>
				<verse number="33">ಅವನನ್ನು ಮೋಶೆ, ಆರೋನ್ ಹಾಗೂ ಸರ್ವಸಮುದಾಯದ ಬಳಿಗೆ ಹಿಡಿದುಕೊಂಡು ಬಂದರು.</verse>
				<verse number="34">ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ಬಗ್ಗೆ ಇದುವರೆಗೂ ಯಾವ ನಿಯಮವೂ ಇರಲಿಲ್ಲ. ಆದುದರಿಂದ ಅವನನ್ನು ಕಾವಲಿನಲ್ಲಿಟ್ಟರು.</verse>
				<verse number="35">ಆಗ ಸರ್ವೇಶ್ವರ ಮೋಶೆಗೆ, “ಆ ಮನುಷ್ಯನಿಗೆ ಮರಣ ಶಿಕ್ಷೆಯಾಗಬೇಕು. ಜನಸಮೂಹದವರೆಲ್ಲ ಅವನನ್ನು ಪಾಳೆಯದ ಹೊರಗೆ ಕಲ್ಲೆಸೆದು ಕೊಲ್ಲಬೇಕು,” ಎಂದು ಆಜ್ಞಾಪಿಸಿದರು.</verse>
				<verse number="36">ಅಂತೆಯೇ ಜನಸಮೂಹದವರೆಲ್ಲರು ಆ ವ್ಯಕ್ತಿಯನ್ನು ಪಾಳೆಯದ ಹೊರಗೆ ಎಳೆದುಕೊಂಡು ಹೋಗಿ ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಕಲ್ಲೆಸೆದು ಕೊಂದರು.</verse>
				<verse number="37">ಸರ್ವೇಶ್ವರ ಮೋಶೆಗೆ ಹೀಗೆಂದರು:</verse>
				<verse number="38">“ಇಸ್ರಯೇಲರು ಮತ್ತು ಅವರ ಸಂತತಿಯವರು ತಮ್ಮ ಬಟ್ಟೆಗಳ ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು. ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿದಾರದಿಂದ ಕೂಡಿರಬೇಕೆಂದು ಆಜ್ಞಾಪಿಸು.</verse>
				<verse number="39">ಆ ಗೊಂಡೆಗಳ ಪ್ರಯೋಜನವಿದು - ನೀವು ಅವುಗಳನ್ನು ನೋಡುವಾಗ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅವುಗಳನ್ನು ಪಾಲಿಸಬೇಕು. ಹಿಂದೆ ನೀವು ನನಗೆ ದ್ರೋಹಿಗಳಾಗಿ ನಿಮ್ಮ ಮನಸ್ಸಿಗೆ ಬಂದಂತೆ, ಕಣ್ಣಿಗೆ ತೋರಿದಂತೆ ದಾರಿತಪ್ಪಿ ನಡೆದಿರಿ.</verse>
				<verse number="40">ಈಗ ನನ್ನ ಆಜ್ಞೆಗಳನ್ನೇ ಗಮನದಲ್ಲಿಟ್ಟು ಅವುಗಳನ್ನು ಅನುಸರಿಸಬೇಕು. ಹೀಗೆ ನಿಮ್ಮ ದೇವರಿಗೇ ಪ್ರತಿಷ್ಠಿತರಾಗಿರಬೇಕು.</verse>
				<verse number="41">ನಿಮ್ಮ ದೇವರಾಗಬೇಕೆಂಬ ಉದ್ದೇಶದಿಂದಲೇ ನಿಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿದ ಸರ್ವೇಶ್ವರನಾದ ದೇವರು ನಾನು. ನಾನೇ ನಿಮ್ಮ ದೇವರಾದ ಸರ್ವೇಶ್ವರ.‘</verse>
			</chapter>
			<chapter number="16">
				<verse number="1">ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಚಾರನ ಮಗನೂ ಆದ ಕೋರಹ ಮತ್ತು ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನ್ ಹಾಗೂ ಅಬೀರಾಮ್ ಮತ್ತು ಪೆಲೆತನ ಮಗ ಓನ್ - ಇವರು ಮೋಶೆಗೆ ವಿರುದ್ಧ ಪ್ರತಿಭಟಿಸಿದರು.</verse>
				<verse number="2">ಇವರ ಸಮೇತ ಸಮುದಾಯದವರಲ್ಲಿ ಮುಖ್ಯಸ್ಥರೂ ಸಲಹೆಗಾರರೂ ಹೆಸರಾಂತ ವ್ಯಕ್ತಿಗಳೂ ಆಗಿದ್ದ 250 ಮಂದಿ ಇಸ್ರಯೇಲರು ಕೂಡ ದಂಗೆಯೆದ್ದರು.</verse>
				<verse number="3">ಇವರೆಲ್ಲರೂ ಜೊತೆಗೂಡಿ ಮೋಶೆ ಮತ್ತು ಆರೋನರ ಬಳಿಗೆ ಬಂದು, “ನಿಮ್ಮ ವರ್ತನೆ ಅಧಿಕವಾಯಿತು. ಈ ಸಮುದಾಯದಲ್ಲಿ ಪ್ರತಿಯೊಬ್ಬನೂ ಪ್ರತಿಷ್ಠಿತನೇ. ಸರ್ವೇಶ್ವರ ಇವರೆಲ್ಲರಲ್ಲಿ ವಾಸವಾಗಿದ್ದಾರಲ್ಲವೇ? ಹೀಗಿರಲಾಗಿ ಸರ್ವೇಶ್ವರನ ಸಮುದಾಯದವರಿಗಿಂತ ನಿಮ್ಮನ್ನು ನೀವೇ ಹೆಚ್ಚಿಸಿಕೊಳ್ಳುವುದೇಕೆ?” ಎಂದು ವಾದಿಸಿದರು.</verse>
				<verse number="4">ಈ ಮಾತುಗಳನ್ನು ಕೇಳಿದ್ದೇ ಮೋಶೆ ನೆಲದ ಮೇಲೆ ಬೋರಲಾಗಿ ಬಿದ್ದನು.</verse>
				<verse number="5">ಕೋರಹನಿಗೂ ಅವನ ಪಂಗಡದವರೆಲ್ಲರಿಗೂ ಹೀಗೆಂದನು: “ಸರ್ವೇಶ್ವರ ತನ್ನವರು ಯಾರೆಂದು ನಾಳೆ ತಿಳಿಸುವರು. ಯಾರನ್ನು ಪ್ರತಿಷ್ಠಿಸಿದ್ದಾರೋ ಹಾಗೂ ತಾವೇ ಆರಿಸಿಕೊಂಡಿದ್ದಾರೋ ಅವರನ್ನು ಮಾತ್ರ ತಮ್ಮ ಹತ್ತಿರಕ್ಕೆ ಬರಗೊಳಿಸುವರು.</verse>
				<verse number="6">ನೀವು ಮಾಡಬೇಕಾದುದಿಷ್ಟು - ಕೋರಹನು ಮತ್ತು ಅವನ ಪಂಗಡದವರಾದ ನೀವೆಲ್ಲರೂ ಧೂಪಾರತಿಗಳನ್ನು ತಂದು ಅವುಗಳಲ್ಲಿ ಕೆಂಡವನ್ನಿಟ್ಟು ನಾಳೆ ಸರ್ವೇಶ್ವರನ ಸನ್ನಿಧಿಯಲ್ಲಿ ಧೂಪ ಹಾಕಬೇಕು.</verse>
				<verse number="7">ಆಗ ಸರ್ವೇಶ್ವರ ಯಾರನ್ನು ಮೆಚ್ಚುತ್ತಾರೋ ಅವನೇ ದೇವರಿಗೆ ಪ್ರತಿಷ್ಠಿತನೆಂದು ತಿಳಿದುಕೊಳ್ಳುವಿರಿ. ಲೇವಿಯರೇ, ಅಧಿಕವಾಗಿರುವುದು ನಿಮ್ಮ ವರ್ತನೆಯೆ!”</verse>
				<verse number="8">ಮೋಶೆ ಕೋರಹನಿಗೆ - “ಲೇವಿಯರೇ ಕೇಳಿ:</verse>
				<verse number="9">ಇಸ್ರಯೇಲರ ದೇವರು ತಮ್ಮ ಸಮೂದಾಯದವರಾದ ನಿಮ್ಮನ್ನು ಪ್ರತ್ಯೇಕಿಸಿ ತಮ್ಮ ಗುಡಾರದ ಪರಿಚರ್ಯವನ್ನು ಮಾಡಲು ಹಾಗೂ ಸರ್ವಸಮುದಾಯದ ಸೇವೆಯನ್ನು ಕೈಗೊಳ್ಳಲು ತಮ್ಮ ಬಳಿಯಲ್ಲೇ ಇಟ್ಟುಕೊಂಡರು.</verse>
				<verse number="10">ಇದು ಕೋರಹನಾದ ನಿನಗೂ ನಿನ್ನ ಸ್ವಕುಲದವರಾದ ಲೇವಿಯರಿಗೂ ಕೇವಲ ಅಲ್ಪಕಾರ್ಯವೆಂದು ತೋರಿತೇ? ಯಾಜಕ ಪದವಿ ನಿಮಗಾಗಬೇಕೆಂದು ಕೋರುತ್ತೀರೋ?</verse>
				<verse number="11">ಆರೋನನಂಥವನಿಗೇ ವಿರೋಧವಾಗಿ ಗೊಣಗುವವರಾದ್ದರಿಂದ ನೀನು ಮತ್ತು ನಿನ್ನ ಪಂಗಡದವರೆಲ್ಲರು ಸರ್ವೇಶ್ವರನಿಗೆ ವಿರುದ್ಧ ಕೂಡಿಕೊಂಡವರಾದಿರಿ!” ಎಂದನು.</verse>
				<verse number="12">ಮೋಶೆ ಎಲೀಯಾಬನ ಮಕ್ಕಳಾದ ದಾತಾನ್ ಮತ್ತು ಅಬಿರಾಮರನ್ನು ಬರುವಂತೆ ಹೇಳಿಕಳಿಸಿದನು.</verse>
				<verse number="13">ಅವರು ಅವನಿಗೆ, “ನಾವು ಬರುವುದಿಲ್ಲ, ಹಾಲೂಜೇನೂ ಹರಿಯುವ ದೇಶದಿಂದ ನಮ್ಮನ್ನು ಕರೆತಂದು ಈ ಮರಳುಗಾಡಿನಲ್ಲಿ ಸಾಯಿಸುತ್ತಿರುವೆ. ಇದು ಅಲ್ಪಕಾರ್ಯವೆಂದು ಎಣಿಸುತ್ತೀಯೋ? ನಮ್ಮ ಮೇಲೆ ದೊರೆತನ ಮಾಡಬೇಕೆಂದು ಕೋರುತ್ತಿರುವೆಯೋ?”</verse>
				<verse number="14">ಅಷ್ಟುಮಾತ್ರವಲ್ಲ, ಹಾಲೂಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲೇಯಿಲ್ಲ; ಹೊಲ ಹಾಗು ದ್ರಾಕ್ಷೆತೋಟಗಳನ್ನು ನಮ್ಮ ಸ್ವಾಧೀನಕ್ಕೆ ಕೊಟ್ಟೂ ಇಲ್ಲ. ಈ ಜನರ ಕಣ್ಣಿಗೆ ಮಣ್ಣುಹಾಕಬೇಕೆಂದಿರುವೆಯಾ? ನಾವು ಬರುವುದಿಲ್ಲ,” ಎಂದು ಹೇಳಿದರು.</verse>
				<verse number="15">ಅದಕ್ಕೆ ಮೋಶೆ ಬಹುಕೋಪಗೊಂಡನು. ಸರ್ವೇಶ್ವರನಿಗೆ, “ತಾವು ಇವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡಿ. ನಾನು ಇವರಿಂದ ಒಂದು ಕತ್ತೆಯನ್ನೂ ಕೂಡ ತೆಗೆದುಕೊಂಡವನಲ್ಲ. ಅವರಲ್ಲಿ ಒಬ್ಬನಿಗಾದರೂ ಹಾನಿಮಾಡಿದವನಲ್ಲ,” ಎಂದು ಮನವಿಮಾಡಿದನು.</verse>
				<verse number="16">ಮೋಶೆ ಕೋರಹನಿಗೆ, “ನೀನೂ ನಿನ್ನ ಪಂಗಡದವರು ಮತ್ತು ಆರೋನನು ನಾಳೆ ಸರ್ವೇಶ್ವರನ ಸನ್ನಿಧಿಗೆ ಬರಬೇಕು.</verse>
				<verse number="17">ಪಂಗಡದ ಪ್ರತಿಯೊಬ್ಬನು ತನ್ನ ತನ್ನ ಧೂಪಾರತಿಯನ್ನು ಅಂದರೆ ಒಟ್ಟು 250 ಧೂಪಾರತಿಗಳನ್ನು ತೆಗೆದುಕೊಂಡು ಧೂಪಹಾಕಿ ಸರ್ವೇಶ್ವರನ ಸನ್ನಿಧಿಗೆ ಬರಬೇಕು. ನೀನು ಮತ್ತು ಆರೋನನು ಕೂಡ ನಿಮ್ಮ ನಿಮ್ಮ ಧೂಪಾರತಿಗಳನ್ನು ತೆಗೆದುಕೊಂಡು ಬರಬೇಕು,” ಎಂದು ಹೇಳಿದನು.</verse>
				<verse number="18">ಅದರಂತೆ ಅವರೆಲ್ಲರೂ ತಮ್ಮ ತಮ್ಮ ಧೂಪಾರತಿಗಳನ್ನು ಕೈಯಲ್ಲಿ ತೆಗೆದುಕೊಂಡು ಬಂದು, ಅವುಗಳಲ್ಲಿ ಕೆಂಡವನ್ನಿಟ್ಟು ಧೂಪದ್ರವ್ಯಗಳನ್ನು ಹಾಕಿ ಮೋಶೆ ಮತ್ತು ಆರೋನರ ಜೊತೆ ದೇವದರ್ಶನದ ಗುಡಾರದ ಬಾಗಿಲಲ್ಲಿ ನಿಂತುಕೊಂಡರು.</verse>
				<verse number="19">ಬಳಿಕ ಕೋರಹನು ಸಮುದಾಯದವರೆಲ್ಲರನ್ನು ತಮಗೆದುರಾಗಿ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿದನು. ಆಗ ಸರ್ವೇಶ್ವರನ ತೇಜಸ್ಸು ಸಮುದಾಯದವರೆಲ್ಲರಿಗೆ ಹೊಳೆಯಿತು.</verse>
				<verse number="20">ಮೋಶೆ - ಆರೋನರಿಗೆ ಸರ್ವೇಶ್ವರ,</verse>
				<verse number="21">“ನೀವು ಈ ಸಮುದಾಯದವರಿಂದ ಪ್ರತ್ಯೇಕವಾಗಿ ನಿಲ್ಲಿ; ನಾನು ಇವರನ್ನು ಒಂದು ಕ್ಷಣಮಾತ್ರದಲ್ಲಿ ಭಸ್ಮ ಮಾಡಿಬಿಡುತ್ತೇನೆ,” ಎಂದರು.</verse>
				<verse number="22">ಮೋಶೆ ಮತ್ತು ಆರೋನರು ಅಡ್ಡಬಿದ್ದು, “ದೇವರೇ, ಸರ್ವ ದೇಹಾತ್ಮಗಳಿಗೆ ದೇವರಾಗಿರುವವರೇ, ಒಬ್ಬನೇ ಒಬ್ಬನು ಪಾಪ ಮಾಡಿರುವಲ್ಲಿ ನೀವು ಸಮುದಾಯದ ಎಲ್ಲರ ಮೇಲೆ ಕೋಪಗೊಳ್ಳಬಹುದೆ?” ಎಂದು ಭಿನ್ನವಿಸಿದರು.</verse>
				<verse number="23">ಆಗ ಸರ್ವೇಶ್ವರ ಮೋಶೆಗೆ,</verse>
				<verse number="24">“ಇಸ್ರಯೇಲ್ ಸಮಾಜದವರು ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದ ಸುತ್ತಲಿರದೆ ದೂರವಿರಬೇಕೆಂದು ಅವರಿಗೆ ಆಜ್ಞಾಪಿಸು,” ಎಂದರು.</verse>
				<verse number="25">ಆಗ ಮೋಶೆ ಎದ್ದು ದಾತಾನ್ - ಅಬೀರಾಮರ ಬಳಿಗೆ ಹೋದನು. ಇಸ್ರಯೇಲರ ಹಿರಿಯರು ಅವನ ಹಿಂದೆ ಹೋದರು.</verse>
				<verse number="26">ಇಸ್ರಯೇಲ್ ಸಮಾಜದವರಿಗೆ ಅವನು, “ಈ ದುಷ್ಟರ ಡೇರೆಗಳ ಬಳಿಯಿರದೆ ದೂರಹೋಗಿ. ಇವರ ಸೊತ್ತಿನಲ್ಲಿ ಯಾವುದನ್ನೂ ಮುಟ್ಟಬೇಡಿ. ಇವರ ದೋಷಗಳಿಗೆ ಬರಲಿರುವ ಶಿಕ್ಷೆ ನಿಮ್ಮನ್ನು ಕೊಚ್ಚಿಕೊಂಡು ಹೋದೀತು,” ಎಂದು ಎಚ್ಚರಿಸಿದನು.</verse>
				<verse number="27">ಆದಕಾರಣ ಅವರೆಲ್ಲ ಕೋರಹ, ದಾತಾನ್ ಮತ್ತು ಅಬೀರಾಮರ ಗುಡಾರದ ಸುತ್ತಲಿರದೆ ಬೇರೆಹೋದರು. ದಾತಾನ್, ಅಬೀರಾಮ ಮತ್ತು ಅವರ ಮಡದಿ ಮಕ್ಕಳು, ಬಂಧುಬಳಗದವರೂ ಹೊರಗೆ ಬಂದು ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ನಿಂತುಕೊಂಡರು.</verse>
				<verse number="28">ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲ ನನ್ನ ಸ್ವಂತ ಆಲೋಚನೆಯಿಂದ ಆಗಲಿಲ್ಲ, ಸರ್ವೇಶ್ವರನೇ ಇವುಗಳನ್ನು ನಡೆಸುವುದಕ್ಕೆ ನನ್ನನ್ನು ಕಳಿಸಿದ್ದಾರೆಂದು ನೀವೇ ತಿಳಿದುಕೊಳ್ಳಬಹುದು.</verse>
				<verse number="29">ಅದು ಹೇಗೆಂದರೆ - ಎಲ್ಲರೂ ಸಾಯುವ ರೀತಿಯಲ್ಲೇ ಇವರು ಸತ್ತರೆ, ಅಥವಾ ಎಲ್ಲರಿಗೂ ಸಂಭವಿಸುವ ಗತಿ ಇವರಿಗೆ ಒದಗಿದರೆ ಸರ್ವೇಶ್ವರ ನನ್ನನ್ನು ಕಳಿಸಲಿಲ್ಲವೆಂದು ತಿಳಿದುಕೊಳ್ಳಬೇಕು.</verse>
				<verse number="30">ಬದಲಿಗೆ ಸರ್ವೇಶ್ವರ ಇವರಿಗಾಗಿ ಆಶ್ಚರ್ಯಕರವಾದ ಶಿಕ್ಷೆಯನ್ನು ಕಲ್ಪಿಸಿ ಅಂದರೆ ಭೂಮಿ ಬಾಯ್ದೆರೆದು ಇವರನ್ನು ಹಾಗೂ ಇವರಿಗಿರುವ ಸರ್ವಸ್ವವನ್ನು ನುಂಗಿಬಿಟ್ಟರೆ, ಇವರೆಲ್ಲರು ಸಜೀವಿಗಳಾಗಿ ಪಾತಾಳಕ್ಕೆ ಹೋಗಿಬಿಟ್ಟರೆ, ಇವರು ಸರ್ವೇಶ್ವರನನ್ನು ಉಲ್ಲಂಘಿಸಿದವರೆಂದು ನೀವು ತಿಳಿದುಕೊಳ್ಳಬೇಕು,” ಎಂದು ಹೇಳಿದನು.</verse>
				<verse number="31">ಮೋಶೆ ಈ ಮಾತುಗಳನ್ನು ಹೇಳಿ ಮುಗಿಸಿದ ಕೂಡಲೆ ಆ ಜನರ ಕೆಳಗಿದ್ದ ನೆಲವು ಸೀಳಿತು.</verse>
				<verse number="32">ಭೂಮಿ ಬಾಯ್ದೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸೇರಿದ ವ್ಯಕ್ತಿಗಳೆಲ್ಲರನ್ನೂ ಅವರ ಸರ್ವಸ್ವವನ್ನೂ ನುಂಗಿಬಿಟ್ಟಿತು.</verse>
				<verse number="33">ಅವರು ಸಜೀವರಾಗಿ ತಮ್ಮ ಸರ್ವಸ್ವ ಸಹಿತವಾಗಿ ಪಾತಾಳಕ್ಕೆ ಇಳಿದುಬಿಟ್ಟರು. ಭೂಮಿ ಅವರನ್ನು ಮುಚ್ಚಿಕೊಂಡಿತು.</verse>
				<verse number="34">ಹೀಗೆ ಅವರು ಸಮುದಾಯದಿಂದ ನಾಶವಾದರು. ಅವರ ಸುತ್ತಲಿದ್ದ ಇಸ್ರಯೇಲರೆಲ್ಲರೂ ಸಾಯುವವರ ಹಾಹಾಕಾರವನ್ನು ಕೇಳಿ, “ಭೂಮಿ ನಮ್ಮನ್ನು ನುಂಗದಿರಲಿ” ಎಂದುಕೊಂಡು ಓಡಿಹೋದರು.</verse>
				<verse number="35">ಸರ್ವೇಶ್ವರನ ಬಳಿಯಿಂದ ಬೆಂಕಿ ಹೊರಟು ಧೂಪಾರತಿಯನ್ನು ಅರ್ಪಿಸುತ್ತಿದ್ದ ಆ 250 ಮಂದಿಯನ್ನು ಭಸ್ಮಮಾಡಿತು.</verse>
				<verse number="36">ಸರ್ವೇಶ್ವರ ಸ್ವಾಮಿ ಮೋಶೆಗೆ,</verse>
				<verse number="37">“ಸುಟ್ಟುಹೋದವರ ನಡುವೆಯಿಂದ ಆ ಧೂಪಾರತಿಗಳನ್ನು ಎತ್ತಬೇಕೆಂದು ಮಹಾಯಾಜಕ ಆರೋನನ ಮಗ ಎಲ್ಲಾಜಾರನಿಗೆ ಆಜ್ಞಾಪಿಸು; ನೀನು ಅವುಗಳಲ್ಲಿರುವ ಕೆಂಡಗಳನ್ನು ದೂರಕ್ಕೆ ಚೆಲ್ಲು.</verse>
				<verse number="38">ಆ ಧೂಪಾರತಿಗಳು ಸರ್ವೇಶ್ವರನ ಸನ್ನಿಧಿಗೆ ತರಲಾದವುಗಳು. ಈ ಕಾರಣ ಪವಿತ್ರವಾದುವು. ಆದುದರಿಂದ ಅವುಗಳನ್ನು ತಗಡುಗಳಾಗಿ ತಟ್ಟಿ ಬಲಿಪೀಠಕ್ಕೆ ಮುಚ್ಚಳವನ್ನಾಗಿ ಮಾಡಿಸು. ಹೀಗೆ ಅವು ಇಸ್ರಯೇಲರಿಗೆ ನೆನಪು ಹುಟ್ಟಿಸುವ ಗುರುತುಗಳಾಗುವುವು,” ಎಂದು ಹೇಳಿದರು.</verse>
				<verse number="39">ಮೋಶೆಯ ಮುಖಾಂತರ ಸರ್ವೇಶ್ವರ ಹೇಳಿದ ಅಪ್ಪಣೆಯ ಮೇರೆಗೆ ಯಾಜಕ ಎಲ್ಲಾಜಾರನು, ಸುಟ್ಟುಹೋದವರು ತಂದಿದ್ದ ಆ ಕಂಚಿನ ಧೂಪಾರತಿಗಳನ್ನು ತಗಡುಗಳನ್ನಾಗಿ ತಟ್ಟಿಸಿ ಬಲಿಪೀಠಕ್ಕೆ ಮುಚ್ಚಳವನ್ನು ಮಾಡಿಸಿದನು.</verse>
				<verse number="40">ಆರೋನನ ಸಂತತಿಯವರಲ್ಲದೆ ಇತರರು ಸರ್ವೇಶ್ವರನ ಸನ್ನಿಧಿಗೆ ಬಂದು ಧೂಪವನ್ನು ಅರ್ಪಿಸಬಾರದು; ಅರ್ಪಿಸಿದರೆ ಕೋರಹನಿಗೂ ಅವನ ಪಂಗಡದವರಿಗೂ ಆದ ಗತಿಗೆ ಗುರಿಯಾಗುವರು ಎಂದು ಇಸ್ರಯೇಲರಿಗೆ ಎಚ್ಚರಿಕೆ ನೀಡುವ ಚಿನ್ಹೆಯಾಯಿತು.</verse>
				<verse number="41">ಆದರೂ ಇಸ್ರಯೇಲ್ ಸಮುದಾಯದವರು ಮೋಶೆ ಮತ್ತು ಆರೋನರ ಮೇಲೆ ಗೊಣಗುಟ್ಟ ತೊಡಗಿದರು. ‘ಸರ್ವೇಶ್ವರನ ಜನರನ್ನು ಸಾಯಸಿದವರು ನೀವೇ’ ಎಂದು ಹೇಳುವವರಾದರು.</verse>
				<verse number="42">ಸಮುದಾಯದವರೆಲ್ಲರೂ ಹೀಗೆ ಮೋಶೆ ಮತ್ತು ಆರೋನರ ವಿರುದ್ಧ ಪ್ರತಿಭಟಿಸಲು ಸಭೆ ಸೇರಿದರು. ಅವರು ದೇವದರ್ಶನದ ಗುಡಾರದತ್ತ ನೋಡಿದಾಗ, ಮೇಘವೊಂದು ಅದನ್ನು ಆವರಿಸಿತು ಮತ್ತು ಸರ್ವೇಶ್ವರನ ತೇಜಸ್ಸು ಹೊಳೆಯಿತು.</verse>
				<verse number="43">ಮೋಶೆ - ಆರೋನರು ದೇವದರ್ಶನದ ಗುಡಾರದ ಮುಂಭಾಗಕ್ಕೆ ಬಂದರು.</verse>
				<verse number="44">ಆಗ ಸರ್ವೇಶ್ವರ ಮೋಶೆಗೆ: “ನೀವಿಬ್ಬರು ಸಮುದಾಯದವರೊಂದಿಗೆ ಸೇರದೆ ಬೇರೆ ನಿಲ್ಲಬೇಕು. ಒಂದೇ ಕ್ಷಣದಲ್ಲಿ ನಾನು ಅವರನ್ನು ಭಸ್ಮ ಮಾಡಿಬಿಡುತ್ತೇನೆ,” ಎಂದರು. ಆಗ ಮೋಶೆ ಆರೋನರು ಸಾಷ್ಠಾಂಗವೆರಗಿದರು.</verse>
				<verse number="45"></verse>
				<verse number="46">ಮೋಶೆ, ಆರೋನನನ್ನು ಉದ್ದೇಶಿಸಿ, “ಸರ್ವೇಶ್ವರನಿಗೆ ಕೋಪವುಂಟಾಗಿದೆ: ಈ ಜನರೊಳಗೆ ಘೋರ ವ್ಯಾಧಿಯೊಂದು ಪ್ರಾರಂಭವಾಗಿಬಿಟ್ಟಿದೆ. ನೀನು ಧೂಪಾರತಿಯನ್ನು ತೆಗೆದುಕೊಂಡು ಅದರಲ್ಲಿ ಬಲಿಪೀಠದಿಂದ ಕೆಂಡಗಳನ್ನು ಇಟ್ಟು ಧೂಪ ಹಾಕಿ ಸಮುದಾಯದವರ ಬಳಿಗೆ ಬೇಗ ಹೋಗು; ಅವರ ಪರವಾಗಿ ದೋಷಪರಿಹಾರವನ್ನು ಮಾಡು,” ಎಂದು ಹೇಳಿದನು.</verse>
				<verse number="47">ಮೋಶೆ ಹೇಳಿದಂತೆಯೇ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮುದಾಯದವರ ಬಳಿಗೆ ಓಡಿಬಂದಾಗ ಆ ಘೋರವ್ಯಾಧಿ ಜನರಲ್ಲಿ ಹರಡಿಕೊಳ್ಳುತ್ತಲಿತ್ತು. ಅವನು ಧೂಪಹಾಕಿ ಆ ಜನರ ಪರವಾಗಿ ದೋಷಪರಿಹಾರ ಮಾಡಿದನು;</verse>
				<verse number="48">ಸತ್ತವರಿಗೂ ಹಾಗೂ ಬದುಕುವವರಿಗೂ ನಡುವೆ ಅವನು ನಿಂತನು. ಆ ವಿಪತ್ತು ಶಮನವಾಯಿತು.</verse>
				<verse number="49">ಕೋರಹನನ್ನು ಸೇರಿಕೊಂಡು ಸತ್ತವರಲ್ಲದೆ ಆ ವಿಪತ್ತಿನಿಂದಲೇ ಸತ್ತವರ ಸಂಖ್ಯೆ 14,700:</verse>
				<verse number="50">ವಿಪತ್ತು ನಿಂತಮೇಲೆ ಆರೋನನು ದೇವದರ್ಶನದ ಗುಡಾರದ ಬಳಿಯಿದ್ದ ಮೋಶೆಯ ಬಳಿಗೆ ಹಿಂದಿರುಗಿದನು.</verse>
			</chapter>
			<chapter number="17">
				<verse number="1">ಸರ್ವೇಶ್ವರ ಮೋಶೆಗೆ ಹೀಗೆಂದರು:</verse>
				<verse number="2">“ಇಸ್ರಯೇಲರ ಸಂಗಡ ನೀನು ಮಾತಾಡಿ ಒಂದೊಂದು ಕುಲದ ಅಧಿಪತಿಯಿಂದ ಒಂದೊಂದು ಕೋಲಿನ ಮೇರೆಗೆ ಹನ್ನೆರಡು ಕೋಲುಗಳನ್ನು ತೆಗೆದುಕೋ. ಅವನವನ ಕೋಲಿನ ಮೇಲೆ ಆಯಾ ಅಧಿಪತಿಯ ಹೆಸರನ್ನು ಬರೆಯಿಸು.</verse>
				<verse number="3">ಲೇವಿಯ ಕುಲಕ್ಕೂ ಒಂದು ಕೋಲು ಇರುವುದರಿಂದ ಅದರ ಮೇಲೆ ಆರೋನನ ಹೆಸರನ್ನು ಬರೆಯಿಸು.</verse>
				<verse number="4">ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ ಮಂಜೂಷದ ಮುಂದೆ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿ ಇಡು.</verse>
				<verse number="5">ಯಾರನ್ನು ನಾನು ಮೆಚ್ಚಿದ್ದೇನೋ ಅವನ ಕೋಲು ಚಿಗುರುವುದು. ನಿಮ್ಮಿಬ್ಬರ ವಿರುದ್ಧ ಇಸ್ರಯೇಲರು ಗೊಣಗುವುದು ಇನ್ನು ಕೇಳಿಸದಂತೆ ಹೀಗೆ ನಿಲ್ಲಿಸಿಬಿಡುತ್ತೇನೆ.”</verse>
				<verse number="6">ಅದರಂತೆಯೇ ಮೋಶೆ ಇಸ್ರಯೇಲರೊಡನೆ ಮಾತಾಡಿದನು. ಅವರ ಕುಲಾಧಿಪತಿಗಳೆಲ್ಲರೂ ಕುಲಕ್ಕೆ ಒಂದರಂತೆ ಹನ್ನೆರಡು ಕೋಲುಗಳನ್ನು ಅವನ ಕೈಗೆ ಕೊಟ್ಟರು. ಅವುಗಳೊಡನೆ ಆರೋನನ ಕೋಲು ಇತ್ತು.</verse>
				<verse number="7">ಮೋಶೆ ಆ ಕೋಲುಗಳನ್ನು ಮಂಜೂಷವಿರುವ ಗುಡಾರದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲಿ ಇಟ್ಟನು.</verse>
				<verse number="8">ಮಾರನೆಯ ದಿನ ಮೋಶೆ ಗುಡಾರದೊಳಗೆ ಹೋಗಿ ನೋಡಿದನು. ಏನಾಶ್ಚರ್ಯ! ಲೇವಿಕುಲದ ಪರವಾಗಿ ಆರೋನನು ಕೊಟ್ಟಿದ್ದ ಕೋಲು ಚಿಗುರಿತ್ತು; ಮೊಗ್ಗುಗಳು ಬಿಟ್ಟು, ಹೂವರಳಿ, ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.</verse>
				<verse number="9">ಮೋಶೆ ಆ ಕೋಲುಗಳನ್ನೆಲ್ಲ ಸವೇಶ್ವರನ ಸನ್ನಿಧಿಯಿಂದ ಇಸ್ರಯೇಲರೆಲ್ಲರ ಬಳಿಗೆ ತಂದು ತೋರಿಸಿದನು. ಅವರು ತಮ್ಮ ತಮ್ಮ ಕೋಲುಗಳನ್ನು ಪರೀಕ್ಷಿಸಿ ತೆಗೆದುಕೊಂಡರು.</verse>
				<verse number="10">ಅನಂತರ ಸರ್ವೇಶ್ವರ ಮೋಶೆಗೆ: “ಆರೋನನ ಕೋಲನ್ನು ಮರಳಿ ಮಂಜೂಷದ ಮುಂದೆ ಇಡಬೇಕು. ದಂಗೆಯೇಳುವವರಿಗೆ ದೃಷ್ಟಾಂತವಾಗಿ ಅದು ಅಲ್ಲೇ ಇರಲಿ. ಇನ್ನು ಮುಂದೆ ಈ ಜನರು ನನಗೆ ವಿರುದ್ಧ ಗೊಣಗಿ ನಾಶವಾಗಬಾರದು. ಅದಕ್ಕಾಗಿ ನೀನು ಹೀಗೆ ಮಾಡು,” ಎಂದು ಆಜ್ಞಾಪಿಸಿದರು.</verse>
				<verse number="11">ಸರ್ವೇಶ್ವರನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು.</verse>
				<verse number="12">ಇಸ್ರಯೇಲರು ಮೋಶೆಯ ಬಳಿಗೆ ಬಂದು, “ಇಗೋ ನಾವು ನಾಶವಾಗಲಿದ್ದೇವೆ, ನಶಿಸಿಹೋಗುತ್ತೇವೆ, ನಿಶ್ಯೇಷವಾಗಿ ನಿರ್ಮೂಲವಾಗುವ ಹಾಗೆ ಕಾಣುತ್ತದೆ.</verse>
				<verse number="13">ಸರ್ವೇಶ್ವರನ ಗುಡಾರದ ಸಮೀಪಕ್ಕೆ ಬರುವವರೆಲ್ಲರು ಸಾಯಲೇ ಬೇಕಾದರೆ ಇನ್ನು ನಾವೆಲ್ಲರು ಸತ್ತಹಾಗೆ ತಾನೆ?” ಎಂದರು.</verse>
			</chapter>
			<chapter number="18">
				<verse number="1">ಸರ್ವೇಶ್ವರ ಸ್ವಾಮಿ ಆರೋನನಿಗೆ ಹೀಗೆಂದರು: “ದೇವದರ್ಶನದ ಗುಡಾರದ ವಿಷಯದಲ್ಲಿ ಏನಾದರು ಅಕ್ರಮ ನಡೆದರೆ ನೀನು, ನಿನ್ನ ಸಂತತಿಯವರು ಮತ್ತು ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕ ಸೇವೆಯ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನು ಮತ್ತು ನಿನ್ನ ಸಂತತಿಯವರು ಮಾತ್ರ ಆ ದೋಷದ ಫಲವನ್ನು ಅನುಭವಿಸಬೇಕು.</verse>
				<verse number="2">ನಿನ್ನ ಕುಲದ ಮೂಲ ಪುರುಷನಾದ ಲೇವಿಯ ವಂಶದವರನ್ನು ನಿನ್ನ ಜೊತೆಯಲ್ಲಿರಿಸಿಕೊಂಡು, ನಿನ್ನ ಕೈಕೆಳಗೆ ಸೇವೆಮಾಡಿಸು. ಆದರೆ ಮಂಜೂಷವಿರುವ ಗುಡಾರದ ಮುಂದೆ ನೀನು ಮತ್ತು ನಿನ್ನ ಮಕ್ಕಳು ಮಾತ್ರ ಸೇವೆಮಾಡಬೇಕು.</verse>
				<verse number="3">ಲೇವಿಯರು ನಿನ್ನ ಅಪ್ಪಣೆ ಮೇರೆಗೆ ನಡೆದು ಇಡೀ ಗುಡಾರವನ್ನು ಕಾಯಬೇಕು. ಆದರೆ ಪವಿತ್ರಸ್ಥಾನದ ವಸ್ತುಗಳ ಹತ್ತಿರವಾಗಲಿ, ಬಲಿಪೀಠದ ಹತ್ತಿರವಾಗಲಿ ಅವರು ಬರಕೂಡದು; ಬಂದರೆ ಅವರು ಮಾತ್ರವಲ್ಲ ನೀವೂ ಕೂಡ ಸಾಯಬೇಕಾಗಬಹುದು.</verse>
				<verse number="4">ಅವರು ನಿಮ್ಮ ಜೊತೆ ಸೇರಿ ದೇವದರ್ಶನದ ಗುಡಾರವನ್ನು ನೋಡಿಕೊಳ್ಳಲಿ; ಅದರ ಎಲ್ಲ ಪರಿಚರ್ಯವನ್ನು ಮಾಡಲಿ. ಇತರ ಕುಲದವರ ಜೊತೆ ನಿಮಗೆ ಬೇಡ.</verse>
				<verse number="5">ದೇವಸ್ಥಾನದ ವ್ಯವಹಾರವನ್ನು ಮತ್ತು ಬಲಿಪೀಠವನ್ನು ನೀವೇ ನೋಡಿಕೊಳ್ಳಬೇಕು. ಆಗ ದೇವರ ಕೋಪ ಮತ್ತೆ ಇಸ್ರಯೇಲರ ಮೇಲೆ ಬಾರದು.</verse>
				<verse number="6">ಇಸ್ರಯೇಲರಲ್ಲಿ ನಿನ್ನ ಕುಲದವರಾದ ಲೇವಿಯರನ್ನು ನಾನೇ ಆರಿಸಿಕೊಂಡಿದ್ದೇನೆ. ಅವರು ಸರ್ವೇಶ್ವರನಿಗೆ ಸಮರ್ಪಿತವಾಗಿ ಕಾಣಿಕೆಯಂತೆ ನಿನ್ನ ವಶದಲ್ಲೇ ಇದ್ದಾರೆ. ದೇವದರ್ಶನದ ಗುಡಾರದ ಪರಿಚರ್ಯವನ್ನು ಅವರೇ ಮಾಡಲಿ.</verse>
				<verse number="7">ನೀನು ಮತ್ತು ನಿನ್ನ ಸಂತತಿಯವರು ಯಾಜಕ ಕರ್ತವ್ಯಗಳನ್ನು ಕೈಗೊಂಡು ಬಲಿಪೀಠದ ಮತ್ತು ಗರ್ಭಗುಡಿಯ ಸೇವೆಯನ್ನು ನಡೆಸಬೇಕು. ಅವುಗಳ ಪರಿಚರ್ಯವನ್ನು ನೀವೇ ಮಾಡಬೇಕು. ಯಾಜಕ ಪದವಿಯನ್ನು ನಿಮಗೆ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಬಾರದು. ಹಾಕಿದರೆ ಅಂಥವರಿಗೆ ಮರಣಶಿಕ್ಷೆಯಾಗಬೇಕು.”</verse>
				<verse number="8">ಸರ್ವೇಶ್ವರ ಆರೋನನಿಗೆ ಹೀಗೆಂದು ಆಜ್ಞಾಪಿಸಿದರು: “ಇಸ್ರಯೇಲರು ನನಗಾಗಿ ಮೀಸಲಾಗಿಟ್ಟು ಸಮರ್ಪಿಸುವ ಪದಾರ್ಥಗಳನ್ನೆಲ್ಲ ಅಂದರೆ ಪ್ರತಿಷ್ಠಾಪಿತವಾದ ವಸ್ತುಗಳನ್ನೆಲ್ಲಾ ನಿನಗೂ ನಿನ್ನ ಸಂತತಿಯವರಿಗೂ ದಾನಮಾಡಿದ್ದೇನೆ. ಅವು ಸದಾಕಾಲ ನಿಮಗೆ ಸಲ್ಲಬೇಕಾದ ಪಾಲು.</verse>
				<verse number="9">ಅಗ್ನಿಯಲ್ಲಿ ದಹನಮಾಡದೆ ಉಳಿಸುವ ಮಹಾಪರಿಶುದ್ಧ ಪದಾರ್ಥಗಳೆಲ್ಲ ಅಂದರೆ ಇಸ್ರಯೇಲರು ನನಗೆ ಸಮರ್ಪಿಸುವ ಎಲ್ಲ ಧಾನ್ಯ ದ್ರವ್ಯ, ನೈವೇದ್ಯ ದ್ರವ್ಯ, ಪಾಪ ಪರಿಹಾರಕ ಬಲಿ, ಪ್ರಾಯಶ್ಚಿತ್ತ ಬಲಿಕಾಣಿಕೆ, ಇವುಗಳಲ್ಲಿ ದಹನವಾಗದೆ ಉಳಿದ ಭಾಗಗಳು ಮಹಾಪರಿಶುದ್ಧವಾದುವುಗಳು. ಅವು ನಿನಗೂ ನಿನ್ನ ಸಂತತಿಯವರಿಗೂ ಸಲ್ಲತಕ್ಕವು.</verse>
				<verse number="10">ಅವುಗಳಲ್ಲಿ ಅತಿ ಪವಿತ್ರವಾದುವುಗಳನ್ನು ನೀವೇ ಊಟಮಾಡಬೇಕು. ನಿಮ್ಮಲ್ಲಿರುವ ಗಂಡಸರೆಲ್ಲರೂ ಅವುಗಳನ್ನು ತಿನ್ನಬಹುದು. ಅವು ಅತಿ ಪವಿತ್ರವಾದುವು; ಎಂಬುದನ್ನು ತಿಳಿದಿರಬೇಕು.</verse>
				<verse number="11">“ಇದಲ್ಲದೆ ಇಸ್ರಯೇಲರು ನನಗೆ ಮೀಸಲಾಗಿಟ್ಟು ಅರ್ಪಿಸುವ ದ್ರವ್ಯಗಳು, ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಸಲ್ಲಬೇಕು. ಇವು ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿ ಶುದ್ಧರಾದವರೆಲ್ಲರೂ ಊಟಮಾಡಬಹುದು.</verse>
				<verse number="12">“ಇಸ್ರಯೇಲರು ನನಗೆ ಸಮರ್ಪಿಸುವ ಪ್ರಥಮ ಫಲಗಳು, ಅಂದರೆ ಎಣ್ಣೆ, ದ್ರಾಕ್ಷಾರಸ, ಧಾನ್ಯ, ಇವುಗಳಲ್ಲಿ ಶ್ರೇಷ್ಠವಾದುದು ನಿನಗೇ ಸಿಗಬೇಕೆಂದು ವಿಧಿಸಿದ್ದೇನೆ.</verse>
				<verse number="13">ಆ ಜನರು ತಮ್ಮ ನಾಡಿನ ಎಲ್ಲ ಬೆಳೆಗಳಲ್ಲಿ ನನಗೆ ತರುವ ಪ್ರಥಮ ಫಲಗಳು ನಿನಗೇ ಸಲ್ಲಬೇಕು. ನಿಮ್ಮ ಮನೆಗಳಲ್ಲಿ ಶುದ್ಧರಾಗಿರುವ ಎಲ್ಲರೂ ಅವುಗಳನ್ನು ಊಟಮಾಡಬಹುದು.</verse>
				<verse number="14">ಅವರು ನನಗೆ ಹರಕೆಮಾಡಿ ಅರ್ಪಿಸಿಕೊಡುವ ಪ್ರತಿಯೊಂದು ನಿನಗೆ ದಕ್ಕಬೇಕು.</verse>
				<verse number="15">“ಮನುಷ್ಯರಲ್ಲೇ ಆಗಲಿ, ಪಶುಗಳಲ್ಲೇ ಆಗಲಿ, ಅವರು ನನಗೆ ಸಮರ್ಪಿಸುವ ಸಕಲ ಪ್ರಾಣಿಗಳಲ್ಲಿ ಚೊಚ್ಚಲಿನದು ನಿನಗೆ ಸಲ್ಲಬೇಕು. ಆದರೆ ಮನುಷ್ಯರ ಚೊಚ್ಚಲು ಮಕ್ಕಳಿಗೂ ಅಪವಿತ್ರವಾದ ಪಶುಗಳ ಮರಿಗಳಿಗೂ ಬದಲಾಗಿ ನೀನು ಈಡನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.</verse>
				<verse number="16">ಹೀಗೆ ಬಿಟ್ಟುಬಿಡಬೇಕಾದ ಶಿಶುಗಳು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗಲೆ ಗೊತ್ತಾದ ಈಡನ್ನು ಅಂದರೆ ದೇವರ ಸೇವೆಗೆ ನಿಗದಿಯಾದ ಇಪ್ಪತ್ತು ‘ಗೇರಾ’ ತೂಕದ ನಾಣ್ಯದ ಮೇರೆಗೆ ಐದು ಶೆಕೆಲ್ ನಾಣ್ಯವನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡು.</verse>
				<verse number="17">ಹಸುವಿನ ಮತ್ತು ಆಡುಕುರಿಗಳ ಚೊಚ್ಚಲು ಮರಿಗಳನ್ನು ಬಿಡಕೂಡದು. ಅವು ದೇವರ ಸೊತ್ತು. ಆದ್ದರಿಂದ ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸು; ಅವುಗಳ ಕೊಬ್ಬನ್ನು ಬಲಿಕಾಣಿಕೆಯಾಗಿ ದಹಿಸು.</verse>
				<verse number="18">ಅವುಗಳ ಮಾಂಸ ಹಾಗೂ ನೈವೇದ್ಯವಾಗಿ ಆರತಿಯೆತ್ತುವ ಎದೆ ಮತ್ತು ಬಲತೊಡೆ ನಿನಗೆ ಸಲ್ಲಬೇಕು.</verse>
				<verse number="19">“ಇಸ್ರಯೇಲರು ನನಗೆ ಮೀಸಲಾಗಿಟ್ಟು ಸಮರ್ಪಿಸುವ ಪವಿತ್ರ ವಸ್ತುಗಳೆಲ್ಲಾ ನಿನಗೂ ನಿನ್ನ ಸಂತತಿಯವರಾದ ಸ್ತ್ರೀಪುರುಷರಿಗೂ ಸಲ್ಲಬೇಕು. ಸದಾಕಾಲಕ್ಕೂ ಇದನ್ನು ನಾನು ನಿನಗೆ ಅನುಗ್ರಹಿಸಿದ್ದೇನೆ. ಇದು ನನ್ನ ಸನ್ನಿಧಿಯಲ್ಲಿ ನಿನ್ನೊಡನೆ ಮತ್ತು ನಿನ್ನ ಸಂತತಿಯೊಡನೆ ಮಾಡಿಕೊಂಡ ಶಾಶ್ವತವಾದ ಉಪ್ಪಿನ ಒಡಂಬಡಿಕೆ.”</verse>
				<verse number="20">ಇದಲ್ಲದೆ ಸರ್ವೇಶ್ವರ ಆರೋನನಿಗೆ ಹೀಗೆಂದರು: “ಇಸ್ರಯೇಲರ ನಾಡಿನಲ್ಲಿ ನಿನ್ನ ಸ್ವಂತ ಸೊತ್ತಾಗಿ ಯಾವ ಆಸ್ತಿಯೂ ಇರುವುದಿಲ್ಲ; ಅವರೊಂದಿಗೆ ನಿನಗೆ ಯಾವ ಪಾಲೂ ಇರುವುದಿಲ್ಲ. ಇಸ್ರಯೇಲರ ನಡುವೆ ನಾನೇ ನಿನಗೆ ಆಸ್ತಿಪಾಸ್ತಿ, ಪಾಲುಪಸುಗೆ.”</verse>
				<verse number="21">“ಇಗೋ, ಇಸ್ರಯೇಲರಿಂದ ಸಕಲ ಪದಾರ್ಥಗಳ ಹತ್ತನೆಯ ಪಾಲನ್ನು ಗೊತ್ತುಮಾಡಿ ಲೇವಿಯರಿಗೆ ಕೊಟ್ಟಿದ್ದೇನೆ. ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡುವ ಅವರಿಗೆ ಇದು ಸಲ್ಲತಕ್ಕ ಸಂಭಾವನೆ.</verse>
				<verse number="22">ಇನ್ನು ಮುಂದೆ ಇಸ್ರಯೇಲರು ಪಾಪಮಾಡಿ ಸಾವಿಗೆ ತುತ್ತಾಗದಂತೆ ದೇವದರ್ಶನದ ಗುಡಾರದ ಹತ್ತಿರಕ್ಕೆ ಬರಕೂಡದು.</verse>
				<verse number="23">ಆ ಗುಡಾರದ ಪರಿಚರ್ಯವನ್ನು ಮಾಡಬೇಕಾದವರು ಲೇವಿಯರೇ. ಅದರ ಸಂಬಂಧವಾಗಿ ಅವರು ಮಾಡುವ ಪಾಪದ ಫಲವನ್ನು ಅವರೇ ಅನುಭವಿಸಲಿ. ಇದು ನಿಮಗೂ ನಿಮ್ಮ ಸಂತತಿಯವರಿಗೂ ಒಂದು ಶಾಶ್ವತವಾದ ನಿಯಮವಾಗಿರಲಿ. ಲೇವಿಯರಿಗೆ ಇಸ್ರಯೇಲರಲ್ಲಿ ಶಾಶ್ವತ ಸೊತ್ತು ಇರುವುದಿಲ್ಲ.</verse>
				<verse number="24">ಇಸ್ರಯೇಲರು ನನಗೆ ಮೀಸಲಾಗಿಟ್ಟು ಸಮರ್ಪಿಸುವ ಹತ್ತನೆಯ ಪಾಲನ್ನು ಅವರಿಗೆ ಸೊತ್ತಾಗಿ ಕೊಟ್ಟಿದ್ದೇನೆ. ಆದುದರಿಂದಲೇ ಇತರ ಇಸ್ರಯೇಲರಿಗೆ ಪಾಲು ದೊರಕುವಂತೆ ಅವರಿಗೆ ಪಾಲು ದೊರಕುವುದಿಲ್ಲವೆಂದು ಒತ್ತಿಹೇಳಿದ್ದೇನೆ.”</verse>
				<verse number="25">ಸರ್ವೇಶ್ವರ ಮೋಶೆಗೆ ಹೀಗೆಂದರು:</verse>
				<verse number="26">“ಲೇವಿಯರಿಗೆ ನೀನು ಇಂತೆಂದು ಆಜ್ಞಾಪಿಸು - ‘ನಿಮ್ಮ ಸ್ವಂತಕ್ಕಾಗಿ ನಾನು ಗೊತ್ತುಮಾಡಿರುವ ಹತ್ತನೆಯ ಒಂದು ಪಾಲನ್ನು ಇಸ್ರಯೇಲರಿಂದ ನೀವು ತೆಗೆದುಕೊಳ್ಳುವಾಗ ಅದರಲ್ಲಿ ಹತ್ತನೆಯ ಒಂದು ಪಾಲನ್ನು ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸಮರ್ಪಿಸಬೇಕು.</verse>
				<verse number="27">ಹೀಗೆ ನೀವು ಸಮರ್ಪಿಸುವ ಹತ್ತನೆಯ ಪಾಲು, ಕಣದಲ್ಲಿನ ದವಸದಿಂದ ಹಾಗೂ ದ್ರಾಕ್ಷಿತೊಟ್ಟಿಯ ರಸದಿಂದ ಬರಬೇಕಾದ ದಶಾಂಶವೆಂದು ಪರಿಗಣಿತವಾಗುವುದು.</verse>
				<verse number="28">ಇಸ್ರಯೇಲರಿಂದ ನಿಮಗೆ ಸಲ್ಲುವ ಹತ್ತನೆಯ ಒಂದು ಪಾಲಿನಲ್ಲಿ ನೀವು ಸರ್ವೇಶ್ವರನಿಗೆ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯಾಜಕ ಆರೋನನಿಗೆ ಒಪ್ಪಿಸಬೇಕು.</verse>
				<verse number="29">ನಿಮಗೆ ಕೊಡಲಾಗುವ ಸಕಲ ಪದಾರ್ಥಗಳಲ್ಲಿ ಉತ್ತಮ ಭಾಗವನ್ನೇ, ಅಂದರೆ ದೇವರ ವಸ್ತುವಾಗುವುದಕ್ಕೆ ಯೋಗ್ಯವಾದ ಭಾಗವನ್ನೇ ಸರ್ವೇಶ್ವರನಿಗೆ ಮೀಸಲಾಗಿಟ್ಟು ಸಮರ್ಪಿಸಬೇಕು.</verse>
				<verse number="30">“ಲೇವಿಯರಿಗೆ ಮತ್ತೆ ಹೀಗೆಂದು ತಿಳಿಸು: “ನಿಮಗೆ ದೊರಕಿದ್ದರಲ್ಲಿ ಉತ್ತಮವಾದುದನ್ನೇ ಪ್ರತ್ಯೇಕಿಸಿ ಸಮರ್ಪಿಸಿದ ಮೇಲೆ ಮಿಕ್ಕದ್ದನ್ನು ಕಣದಲ್ಲಿನ ದವಸ ಹಾಗೂ ದ್ರಾಕ್ಷಿತೊಟ್ಟಿಯ ರಸವೆಂದು ಭಾವಿಸಿ ನೀವು ಉಪಯೋಗಿಸಿಕೊಳ್ಳಬಹುದು.</verse>
				<verse number="31">ನೀವು ಮತ್ತು ನಿಮ್ಮ ಮನೆಯವರು ಅದನ್ನು ಯಾವ ಸ್ಥಳದಲ್ಲಿಯಾದರೂ ಊಟಮಾಡಬಹುದು. ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ಪ್ರತಿಫಲ.</verse>
				<verse number="32">ಅದರಲ್ಲಿ ಉತ್ತಮಭಾಗವನ್ನು ಸರ್ವೇಶ್ವರನಿಗೆ ಮೀಸಲಾಗಿಟ್ಟ ನಂತರ ಮಿಕ್ಕದ್ದನ್ನು ಊಟಮಾಡುವುದರಿಂದ ಯಾವ ದೋಷಕ್ಕೂ ನೀವು ಗುರಿಯಾಗುವುದಿಲ್ಲ. ಇಸ್ರಯೇಲರು ಸಮರ್ಪಿಸುವ ಪವಿತ್ರ ವಸ್ತುಗಳನ್ನು ಅಪವಿತ್ರಗೊಳಿಸಬೇಡಿ; ಇಲ್ಲವಾದರೆ ಸಾಯುವಿರಿ.”</verse>
			</chapter>
			<chapter number="19">
				<verse number="1">ಸರ್ವೇಶ್ವರ ಸ್ವಾಮಿ ಮೋಶೆ ಮತ್ತು ಆರೋನನಿಗೆ ಹೀಗೆಂದರು:</verse>
				<verse number="2">“ಸರ್ವೇಶ್ವರನಾದ ನಾನು ಒಂದು ವಿಧಿಯನ್ನು ನೇಮಿಸಿದ್ದೇನೆ. ಅದೇನೆಂದರೆ - ಎಂದೂ ನೊಗವನ್ನು ಹೊರದ ಹಾಗೂ ಯಾವ ಕುಂದುಕೊರತೆಯೂ ಇಲ್ಲದ ಒಂದು ಕೆಂದಾಕಳನ್ನು ನಿನಗೆ ತಂದುಕೊಡಬೇಕೆಂದು ಇಸ್ರಯೇಲರಿಗೆ ತಿಳಿಸು.</verse>
				<verse number="3">ಅದನ್ನು ನೀವು ಯಾಜಕ ಎಲ್ಲಾಜಾರನ ಕೈಗೆ ಒಪ್ಪಿಸಬೇಕು. ಆತ ಅದನ್ನು ಪಾಳೆಯದ ಹೊರಗೆ ಹೊಡೆಸಿಕೊಂಡು ಹೋಗಿ ತನಗೆದುರಾಗಿಯೇ ಒಬ್ಬನ ಕೈಯಿಂದ ವಧೆ ಮಾಡಿಸಬೇಕು.</verse>
				<verse number="4">ತರುವಾಯ ಎಲ್ಲಾಜಾರನು ಅದರ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಿಂದ ದೇವದರ್ಶನದ ಗುಡಾರದ ಮುಂಭಾಗದತ್ತ ಏಳುಸಾರಿ ಚಿಮುಕಿಸಬೇಕು.</verse>
				<verse number="5">ಆ ಆಕಳನ್ನು ಚರ್ಮ, ಮಾಂಸ, ರಕ್ತ, ಕಲ್ಮಷಗಳ ಸಹಿತವಾಗಿ ತನ್ನ ಎದುರಿನಲ್ಲೇ ದಹಿಸಿಬಿಡಬೇಕು.</verse>
				<verse number="6">ಯಾಜಕನು ದೇವದಾರು ಮರದ ಕಟ್ಟಿಗೆಯನ್ನು ಹಿಸ್ಸೋಪ್ ಗಿಡದ ಬರಲನ್ನು ಮತ್ತು ರಕ್ತವರ್ಣದ ದಾರವನ್ನು ತೆಗೆದುಕೊಂಡು ಆ ಆಕಳನ್ನು ದಹಿಸುವ ಬೆಂಕಿಯಲ್ಲಿ ಹಾಕಬೇಕು.</verse>
				<verse number="7">ಬಳಿಕ ಯಾಜಕನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಿ ಪಾಳೆಯದೊಳಗೆ ಬರಬಹುದು. ಆದರೆ ಆ ದಿನದ ಸಂಜೆಯವರೆಗೂ ಅವನು ಮಡಿಗೆಟ್ಟವನಾಗಿರಬೇಕು.</verse>
				<verse number="8">ಆ ಆಕಳನ್ನು ಸುಟ್ಟವನು ಕೂಡ ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸ್ನಾನ ಮಾಡಿ ಆ ದಿನದ ಸಂಜೆಯ ತನಕ ಮಡಿಗೆಟ್ಟವನಾಗಿರಬೇಕು.</verse>
				<verse number="9">“ಶುದ್ಧನಾದವನೊಬ್ಬನು ಆ ಆಕಳಿನ ಬೂದಿಯನ್ನು ಕೂಡಿಸಿ ಪಾಳೆಯದ ಹೊರಗೆ ಶುದ್ಧವಾದ ಒಂದು ಸ್ಥಳದಲ್ಲಿ ಇಡಬೇಕು. ಅದನ್ನು ಇಸ್ರಯೇಲ್ ಸಮಾಜದವರ ಉಪಯೋಗಕ್ಕಾಗಿ ನೀವು ಜೋಪಾನವಾಗಿಡಬೇಕು. ಅದು ದೋಷಪರಿಹಾರಕವಾದುದು. ಅದರಿಂದ ಶುದ್ಧೀಕರಣ ನೀರನ್ನು ಸಿದ್ಧಪಡಿಸುವುದಕ್ಕಾಗಿ ಅಲ್ಲೇ ಇಟ್ಟಿರಬೇಕು.</verse>
				<verse number="10">ಆ ಬೂದಿಯನ್ನು ಕೂಡಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು, ಸಂಜೆಯವರೆಗೆ ಮಡಿಗೆಟ್ಟವನಾಗಿರಬೇಕು. ಇದು ಇಸ್ರಯೇಲರಿಗೂ ಅವರ ಮಧ್ಯೆ ವಾಸಿಸುವ ಇತರರಿಗೂ ಅನ್ವಯಿಸುವ ಶಾಶ್ವತ ನಿಯಮ.</verse>
				<verse number="11">“ಮನುಷ್ಯನ ಶವವನ್ನು ಸೋಂಕಿದವನು ಏಳು ದಿನಗಳವರೆಗೆ ಮಡಿಗೆಟ್ಟವನಾಗಿರಬೇಕು.</verse>
				<verse number="12">ಮೂರನೇ ದಿನ ಆ ಬೂದಿಯಿಂದ ದೋಷಪರಿಹಾರ ಮಾಡಿಕೊಂಡು ಏಳನೆಯ ದಿನ ಶುದ್ಧನಾಗುವನು. ಮೂರನೆಯ ದಿನ ಅವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಏಳನೆ ದಿನದಲ್ಲೂ ಶುದ್ಧನಾಗನು.</verse>
				<verse number="13">ಮನುಷ್ಯನ ಶವ ಸೋಂಕಿದವನು ದೋಷಪರಿಹಾರ ಮಾಡಿಕೊಳ್ಳದೆ ಹೋದರೆ ಅವನು ಸರ್ವೇಶ್ವರನ ಗುಡಾರವನ್ನು ಅಪವಿತ್ರಪಡಿಸುತ್ತಾನೆ. ಅಂಥವನನ್ನು ಇಸ್ರಯೇಲರಿಂದ ಬಹಿಷ್ಕರಿಸಬೇಕು. ಶುದ್ಧೀಕರಣ ನೀರನ್ನು ಅವನ ಮೇಲೆ ಚಿಮುಕಿಸದೆ ಇರುವ ಕಾರಣ ಅವನು ಮಡಿಗೆಟ್ಟವನು; ಅವನಿಗುಂಟಾದ ಮೈಲಿಗೆ ಅವನಲ್ಲಿ ಉಳಿದಿರುತ್ತದೆ.</verse>
				<verse number="14">“ಮೈಲಿಗೆ ನಿಯಮವಿದು: ಯಾರಾದರೂ ಡೇರೆಯೊಳಗೆ ಸತ್ತ ಸಂದರ್ಭದಲ್ಲಿ ಆ ಡೇರೆಯೊಳಗಿರುವವರೆಲ್ಲರು ಹಾಗು ಅದರೊಳಗೆ ಬರುವವರು ಕೂಡ ಮೈಲಿಗೆಯಾಗಿರುತ್ತಾರೆ.</verse>
				<verse number="15">ಮುಚ್ಚಳ ಹಾಕಿ ಕಟ್ಟದಿರುವ ಎಲ್ಲ ಪಾತ್ರೆಗಳು ಕೂಡ ಮೈಲಿಗೆಯಾಗಿರುತ್ತವೆ.</verse>
				<verse number="16">ಹೊರಗೆ ಬಯಲಿನಲ್ಲಿರುವ ಯಾವನಿಗಾದರೂ ಶಸ್ತ್ರಹತನ ಶವವಾಗಲಿ, ಬೇರೆ ಯಾವ ಮಾನುಷ್ಯ ಶವವಾಗಲಿ, ಮನುಷ್ಯನ ಎಲುಬಾಗಲಿ ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಮಡಿಗೆಟ್ಟವನಾಗಿರಬೇಕು.</verse>
				<verse number="17">“ಅಂಥ ಮಡಿಗೆಟ್ಟವನನ್ನು ಪವಿತ್ರಪಡಿಸಬೇಕಾದರೆ ಆ ದೋಷಪರಿಹಾರಕ ಬೂದಿಯಲ್ಲಿ ಸ್ವಲ್ಪವನ್ನು ಪಾತ್ರೆಯಲ್ಲಿಟ್ಟು ಅದರ ಮೇಲೆ ಹರಿಯುವ ನೀರನ್ನು ಹುಯ್ಯಬೇಕು.</verse>
				<verse number="18">ಬಳಿಕ ಮೈಲಿಗೆಯಾಗದವನೊಬ್ಬನು ಆ ನೀರನ್ನು ಹಿಸ್ಸೋಪ್ ಗಿಡದ ಗೊಂಚಲಿನಿಂದ ಸಾವಾದ, ಆ ಡೇರೆಯ ಮೇಲೂ ಅದರಲ್ಲಿರುವ ಸಲಕರಣೆಗಳ ಮೇಲೂ ವ್ಯಕ್ತಿಗಳ ಮೇಲೂ ಚಿಮುಕಿಸಬೇಕು. ಹಾಗೆಯೇ ಎಲುಬಾಗಲಿ, ಹತನಾದವನ ಅಥವಾ ಬೇರೆ ಮನುಷ್ಯನ ಶವವಾಗಲಿ, ಸಮಾಧಿಯಾಗಲಿ ಯಾರಿಗೆ ಸೋಂಕಿತೋ ಅವರ ಮೇಲೆಯೂ ಚಿಮುಕಿಸಬೇಕು.</verse>
				<verse number="19">ಮೂರನೆಯ ದಿನದಲ್ಲೂ ಏಳನೆಯ ದಿನದಲ್ಲೂ ಮಡಿಗೆಟ್ಟವನ ಮೇಲೆ ಹಾಗೆಯೇ ಚಿಮುಕಿಸಬೇಕು. ಮಡಿಗೆಟ್ಟವನು ಏಳನೆಯ ದಿನ ದೋಷಪರಿಹಾರ ಹೊಂದುವನು. ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಿಕೊಂಡು ಸಂಜೆ ಶುದ್ಧನಾಗುವನು.</verse>
				<verse number="20">ಮಡಿಗೆಟ್ಟು ದೋಷಪರಿಹಾರ ಮಾಡಿಕೊಳ್ಳದವನು ಸರ್ವೇಶ್ವರನ ದೇವಸ್ಥಾನವನ್ನು ಅಪವಿತ್ರಗೊಳಿಸುತ್ತಾನೆ. ಆದಕಾರಣ ಅಂಥವನಿಗೆ ಸಭೆಯಿಂದ ಬಹಿಷ್ಕಾರ ಹಾಕಬೇಕು. ಶುದ್ಧೀಕರಣ ಜಲವನ್ನು ತನ್ನ ಮೇಲೆ ಚಿಮುಕಿಸಿಕೊಳ್ಳದೆ ಹೋದುದರಿಂದ ಅವನು ಮಡಿಗೆಟ್ಟವನಾಗಿಯೇ ಇರುತ್ತಾನೆ.</verse>
				<verse number="21">“ಇದು ಇಸ್ರಯೇಲರಿಗೆ ಶಾಶ್ವತ ನಿಯಮವಾಗಿರುತ್ತದೆ. ಮೈಲಿಗೆ ನೀಗಿಸುವ ಆ ನೀರನ್ನು ಚಿಮುಕಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಆ ನೀರನ್ನು ಮುಟ್ಟಿದವನು ಆ ದಿನದ ಸಂಜೆಯವರೆಗೂ ಮಡಿಗೆಟ್ಟವನಾಗಿರುವನು.</verse>
				<verse number="22">ಮಡಿಗೆಟ್ಟವನಿಗೆ ಸೋಂಕಿದ ಬಟ್ಟೆ ಯಾವುದೇ ಆಗಲಿ ಮೈಲಿಗೆಯಾದುದೆಂದು ನೀವು ತಿಳದುಕೊಳ್ಳಬೇಕು. ಅದು ಯಾರಿಗೆ ಸೋಂಕಿತೋ ಅವನು ಕೂಡ ಆ ದಿನದ ಸಂಜೆಯವರೆಗೆ ಮಡಿಗೆಟ್ಟವನು.”</verse>
			</chapter>
			<chapter number="20">
				<verse number="1">ಇಸ್ರಯೇಲ್ ಸಮಾಜದವರು ಮೊದಲನೆಯ ತಿಂಗಳಲ್ಲಿ ‘ಚಿನ್’ ಎಂಬ ಮರುಭೂಮಿಗೆ ಬಂದು ಕಾದೇಶಿನಲ್ಲಿ ಇಳಿದುಕೊಂಡರು. ಅಲ್ಲಿ ಮಿರ್ಯಾಮಳು ಮೃತಳಾದಳು; ಆಕೆಯನ್ನು ಅಲ್ಲೇ ಸಮಾಧಿಮಾಡಿದರು.</verse>
				<verse number="2">ಜನರಿಗೆ ನೀರು ಇಲ್ಲದೆಹೋಯಿತು. ಅವರು ಮೋಶೆ ಮತ್ತು ಆರೋನರ ವಿರುದ್ಧ ಸಭೆಸೇರಿ ಮೋಶೆಯ ಸಂಗಡ ವಾದಿಸತೊಡಗಿದರು:</verse>
				<verse number="3">“ಸರ್ವೇಶ್ವರನ ಸನ್ನಿಧಿಯಲ್ಲಿ ನಮ್ಮ ಬಂಧುಬಳಗದವರು ಸತ್ತಂತೆ ನಾವೂ ಸತ್ತುಹೋಗಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು! ನೀವು ಸರ್ವೇಶ್ವರನ ಪ್ರಜೆಯಾದ</verse>
				<verse number="4">ನಮ್ಮನ್ನು ಈ ಮರಳುಗಾಡಿಗೆ ಕರೆದುಕೊಂಡು ಬಂದುದೇಕೆ? ನಾವೂ ನಮ್ಮ ಜಾನುವಾರುಗಳೂ ಇಲ್ಲಿ ಸಾಯಬೇಕೆಂದೊ?</verse>
				<verse number="5">ಈಜಿಪ್ಟ್ ದೇಶದಿಂದ ನಮ್ಮನ್ನು ಬರಮಾಡಿದ್ದು ಈ ಕೀಳು ಸ್ಥಳಕ್ಕೆ ಸೇರಿಸಲಿಕ್ಕೋ? ಈ ನೆಲದಲ್ಲಿ ದವಸಧಾನ್ಯ ಬೆಳೆಯುವಂತಿಲ್ಲ; ಅಂಜೂರವಿಲ್ಲ, ದ್ರಾಕ್ಷಿಯಿಲ್ಲ, ದಾಳಿಂಬೆಯಿಲ್ಲ, ಕುಡಿಯುವುದಕ್ಕೆ ನೀರು ಕೂಡ ಇಲ್ಲ“ ಎಂದು ದೂರಿದರು.</verse>
				<verse number="6">ಮೋಶೆ ಮತ್ತು ಆರೋನರು ಆ ಜನ ಸಂದಣಿಯನ್ನು ಬಿಟ್ಟು, ದೇವದರ್ಶನದ ಗುಡಾರದ ಬಾಗಿಲ ಬಳಿಗೆ ಬಂದು ಸಾಷ್ಟಾಂಗವೆರಗಿದರು. ಆಗ ಸರ್ವೇಶ್ವರನ ತೇಜಸ್ಸು ಅವರಿಗೆ ಕಾಣಿಸಿತು.</verse>
				<verse number="7">ಆಗ ಸರ್ವೇಶ್ವರ ಮೋಶೆಗೆ, “ನೀನು ಆ ಕೋಲನ್ನು ಕೈಗೆ ತೆಗೆದುಕೋ. ನೀನು ಮತ್ತು ನಿನ್ನ ಸಹೋದರ ಆರೋನನು ಜನಸಮೂಹದವರನ್ನು ಸಭೆ ಸೇರಿಸಿರಿ. ಅವರೆಲ್ಲರ ಎದುರಿನಲ್ಲೇ ನೀರುಕೊಡಬೇಕೆಂದು ಆ ಕಡಿದಾದ ಬಂಡೆಗೆ ಆಜ್ಞೆಮಾಡು.</verse>
				<verse number="8">ಅದರಿಂದ ನೀರು ಹೊರಟು ಬರುವುದು. ಅದನ್ನು ಜನಸಮೂಹದವರಿಗೂ ಅವರ ಜಾನುವಾರುಗಳಿಗೂ ಕುಡಿಯಲು ಕೊಡಬಹುದು,” ಎಂದರು.</verse>
				<verse number="9">ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮೋಶೆ ಆ ಕೋಲನ್ನು ಅವರ ಸನ್ನಿಧಿಯಿಂದ ತೆಗೆದುಕೊಂಡನು.</verse>
				<verse number="10">ಆರೋನನ ಜೊತೆಯಲ್ಲಿ ಜನಸಮೂಹದವರ ಬಳಿಗೆ ಹೋಗಿ ಕಡಿದಾದ ಆ ಬಂಡೆಗೆದುರಾಗಿ ಅವರನ್ನು ಸಭೆಸೇರಿಸಿದನು. ಅವರನ್ನು ಸಂಬೋಧಿಸುತ್ತಾ, “ದಂಗೆಕಾರರೇ ಕೇಳಿ; ಈ ಬಂಡೆಯಿಂದ ನಿಮಗೆ ನಾವು ನೀರನ್ನು ಬರಮಾಡಬೇಕೋ,” ಎಂದು ಹೇಳಿ</verse>
				<verse number="11">ಕೈಯೆತ್ತಿ ತನ್ನ ಕೈಯಲ್ಲಿದ್ದ ಕೋಲಿನಿಂದ ಆ ಬಂಡೆಯನ್ನು ಎರಡು ಸಾರಿ ಹೊಡೆದನು. ನೀರು ಪ್ರವಾಹವಾಗಿ ಹೊರಟಿತು. ಜನಸಮೂಹದವರೂ ಅವರ ಜಾನುವಾರಗಳೂ ಕುಡಿದರು.</verse>
				<verse number="12">ಬಳಿಕ ಸರ್ವೇಶ್ವರ ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದೇಹೋದಿರಿ. ಇಸ್ರಯೇಲರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದಿರಿ. ಆದುದರಿಂದ ಈ ಸಮಾಜದವರನ್ನು ನಾನು ವಾಗ್ದಾನಮಾಡಿದ ನಾಡಿಗೆ ನೀವು ಕರೆದುಕೊಂಡು ಹೋಗಕೂಡದು,” ಎಂದು ಹೇಳಿದರು.</verse>
				<verse number="13">ಇಸ್ರಯೇಲರು ಅಲ್ಲಿ ಸರ್ವೇಶ್ವರನ ಸಂಗಡ ವಾದಮಾಡಿದ್ದರಿಂದ ಆ ನೀರಿನ ಪ್ರವಾಹಕ್ಕೆ ‘ಮೆರೀಬಾ’ ಎಂದು ಹೆಸರಾಯಿತು. ಅಲ್ಲಿ ಸರ್ವೇಶ್ವರ ತಮ್ಮ ಪರಮ ಪಾವನತೆಯನ್ನು ವ್ಯಕ್ತಪಡಿಸಿದರು.</verse>
				<verse number="14">ಮೋಶೆ ಕಾದೇಶಿನಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳಿಸಿದನು. “ತಮ್ಮ ಸಂಬಂಧಿಕರಾದ ಇಸ್ರಯೇಲರು ತಮ್ಮಲ್ಲಿ ಮಾಡುವ ಮನವಿ ಇದು - ನಮಗೆ ಸಂಭವಿಸಿದ ಕಷ್ಟದುಃಖಗಳೆಲ್ಲಾ ತಮಗೆ ತಿಳಿದೇ ಇವೆ.</verse>
				<verse number="15">ನಮ್ಮ ಪೂರ್ವಜರು ಈಜಿಪ್ಟ್ ದೇಶಕ್ಕೆ ಹೋದದ್ದು, ಅಲ್ಲಿ ನಾವು ಬಹು ದಿವಸ ವಾಸವಾಗಿದ್ದದ್ದು, ಈಜಿಪ್ಟಿನವರು ನಮ್ಮನ್ನೂ ನಮ್ಮ ಪೂರ್ವಜರನ್ನೂ ಹಿಂಸಿಸಿದ್ದು, ಇವೆಲ್ಲಾ ತಿಳಿದ ವಿಷಯಗಳು.</verse>
				<verse number="16">ನಾವು ಸರ್ವೇಶ್ವರನಿಗೆ ಮೊರೆಯಿಟ್ಟೆವು. ಅವರು ನಮ್ಮ ಪ್ರಾರ್ಥನೆಯನ್ನು ಆಲಿಸಿ ನಮ್ಮನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಇದೆಲ್ಲದರ ಅರಿವು ತಮಗಿದೆ. ಈಗ ನಾವು ತಮ್ಮ ರಾಜ್ಯದ ಗಡಿಪ್ರದೇಶವಾದ ಕಾದೇಶ್ ಎಂಬ ಊರಲ್ಲಿದ್ದೇವೆ.</verse>
				<verse number="17">ತಮ್ಮ ನಾಡನ್ನು ದಾಟಿಹೋಗಲು ಅಪ್ಪಣೆ ಆಗಬೇಕೆಂದು ಬೇಡಿಕೊಳ್ಳುತ್ತೇನೆ. ನಾವು ಹೊಲಗದ್ದೆಗಳ ಮೇಲಾಗಲಿ, ದ್ರಾಕ್ಷಿತೋಟಗಳ ಮೂಲಕವಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನೂ ಕುಡಿಯುವುದಿಲ್ಲ. ರಾಜಮಾರ್ಗದಲ್ಲೇ ನಡೆದು, ತಮ್ಮ ನಾಡಿನ ಗಡಿ ದಾಟುವ ತನಕ ಎಡಕ್ಕಾಗಲಿ ಬಲಕ್ಕಾಗಲಿ ತಿರುಗುವುದಿಲ್ಲ,” ಎಂದು ಹೇಳಿಕಳಿಸಿದನು.</verse>
				<verse number="18">ಆದರೆ ಎದೋಮ್ಯರು, “ನಮ್ಮ ನಾಡನ್ನು ನೀವು ದಾಟಿಹೋಗಕೂಡದು. ದಾಟುವುದಾದರೆ ನಿಮ್ಮ ಮೇಲೆ ಯುದ್ಧಮಾಡುತ್ತೇವೆ,” ಎಂದು ಉತ್ತರಕೊಟ್ಟರು.</verse>
				<verse number="19">ಅದಕ್ಕೆ ಇಸ್ರಯೇಲರು, “ನಾವು ರಾಜಮಾರ್ಗದಲ್ಲೇ ಹೋಗುತ್ತೇವೆ. ನಾವಾಗಲಿ, ನಮ್ಮ ಜಾನುವಾರುಗಳಾಗಲಿ ನಿಮ್ಮ ನೀರನ್ನು ಕುಡಿದರೆ ಅದಕ್ಕೆ ಬೆಲೆ ಕೊಡುತ್ತೇವೆ. ಬೇರೆ ಏನೂ ನಮಗೆ ಬೇಡ; ಕಾಲ್ನಡೆಯಾಗಿ ದಾಟಿಹೋಗುವುದಕ್ಕೆ ಮಾತ್ರ ಅಪ್ಪಣೆಯಾಗಬೇಕು,” ಎಂದು ವಿನಂತಿಸಿದರು.</verse>
				<verse number="20">ಆದರೆ ಎದೋಮ್ಯರು, “ನೀವು ದಾಟಲೇ ಕೂಡದು,” ಎಂದು ಉತ್ತರಿಸಿದರು. ಮಾತ್ರವಲ್ಲ, ದೊಡ್ಡ ಪಡೆಯಾಗಿ ಕೂಡಿಕೊಂಡು ಅವರ ಮೇಲೆ ದಾಳಿಮಾಡಲು ಬಂದರು.</verse>
				<verse number="21">ಹೀಗೆ ಎದೋಮ್ಯರು ತಮ್ಮ ನಾಡನ್ನು ದಾಟಿಹೋಗಲು ಅಪ್ಪಣೆಕೊಡದ ಕಾರಣ ಇಸ್ರಯೇಲರು ಅಲ್ಲಿಂದ ಹಿಂದಿರುಗಿ ಹೊರಟುಹೋದರು.</verse>
				<verse number="22">ಇಸ್ರಯೇಲ್ ಇಡೀ ಸಮಾಜದವರು ಕಾದೇಶಿನಿಂದ ಹೊರಟು ‘ಹೋರ್’ ಎಂಬ ಬೆಟ್ಟಕ್ಕೆ ಬಂದರು.</verse>
				<verse number="23">ಎದೋಮ್ಯರ ನಾಡಿನ ಗಡಿ ಹತ್ತಿರ ಇರುವ ಆ ಹೋರ್ ಬೆಟ್ಟದ ಬಳಿ ಸರ್ವೇಶ್ವರ, ಮೋಶೆ ಮತ್ತು ಆರೋನರ ಸಂಗಡ ಮಾತಾಡಿದರು;</verse>
				<verse number="24">“ಆರೋನನು ದೇಹತ್ಯಜಿಸಿ ತನ್ನ ಪೂರ್ವಜರನ್ನು ಸೇರಲಿ. ನೀವಿಬ್ಬರೂ ಮೆರೀಬಾ ಪ್ರವಾಹದ ಬಳಿ ನನ್ನ ಮಾತನ್ನು ಮೀರಿ ನಡೆದಿರಿ. ಆದ್ದರಿಂದ ನಾನು ಇಸ್ರಯೇಲರಿಗೆ ವಾಗ್ದಾನ ಮಾಡಿದ ನಾಡನ್ನು ಆರೋನನು ಪ್ರವೇಶಿಸಕೂಡದು.</verse>
				<verse number="25">ಅವನನ್ನೂ ಅವನ ಮಗ ಎಲ್ಲಾಜಾರನನ್ನೂ ಕರೆದುಕೊಂಡು ನೀನು ಹೋರ್ ಬೆಟ್ಟವನ್ನು ಹತ್ತು.</verse>
				<verse number="26">ಅಲ್ಲಿ ಆರೋನನ ಯಾಜಕ ವಸ್ತ್ರಗಳನ್ನು ತೆಗೆದು ಅವನ ಮಗ ಎಲ್ಲಾಜಾರನಿಗೆ ತೊಡಿಸು. ಆರೋನನು ಅಲ್ಲಿ ದೇಹವನ್ನು ಬಿಟ್ಟು ತನ್ನ ಪೂರ್ವಜರ ಬಳಿ ಸೇರಲಿ,” ಎಂದು ವಿಧಿಸಿದರು.</verse>
				<verse number="27">ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಮಾಡಿದನು. ಸರ್ವಸಮೂಹದವರು ನೋಡುತ್ತಿರುವಾಗ ಅವರು ಹೋರ್ ಬೆಟ್ಟವನ್ನು ಹತ್ತಿದರು.</verse>
				<verse number="28">ಮೋಶೆ ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ಬಳಿಕ ಮೋಶೆ ಮತ್ತು ಎಲ್ಲಾಜಾರನು ಬೆಟ್ಟದಿಂದ ಇಳಿದುಬಂದರು.</verse>
				<verse number="29">ಆರೋನನು ಸತ್ತುಹೋದುದನ್ನು ಇಸ್ರಯೇಲ್ ಸಮಾಜದವರೆಲ್ಲರೂ ತಿಳಿದು ಅವನಿಗಾಗಿ ಮೂವತ್ತು ದಿನಗಳವರೆಗೆ ಶೋಕಿಸಿದರು.</verse>
			</chapter>
			<chapter number="21">
				<verse number="1">ಇಸ್ರಯೇಲರು ಅತಾರೀಮ್ ಮಾರ್ಗವಾಗಿ ಬರುತ್ತಿದ್ದಾರೆಂದು ನೆಗೇಬಿನಲ್ಲಿ ಕಾನಾನ್ ನಾಡಿನ ದಕ್ಷಿಣ ಪ್ರಾಂತ್ಯದಲ್ಲಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನು ಕೇಳಿದನು. ಅವನು ಇಸ್ರಯೇಲರ ಮೇಲೆ ಯುದ್ಧಮಾಡಿ ಕೆಲವರನ್ನು ಸೆರೆಹಿಡಿದನು.</verse>
				<verse number="2">ಇಸ್ರಯೇಲರು ಸರ್ವೇಶ್ವರನಿಗೆ ಹರಕೆ ಮಾಡಿಕೊಂಡರು: “ನಾವು ಈ ಜನರನ್ನು ಜಯಿಸುವಂತೆ ಅನುಗ್ರಹಿಸಿದರೆ ಅವರ ಗ್ರಾಮಗಳನ್ನು ಪೂರ್ಣ ಹಾಳುಮಾಡಿ ಸರ್ವೇಶ್ವರನಾದ ನಿಮಗಾಗಿಯೇ ಮೀಸಲಿಡುತ್ತೇವೆ,” ಎಂದರು.</verse>
				<verse number="3">ಸರ್ವೇಶ್ವರ ಅವರ ಪ್ರಾರ್ಥನೆಯನ್ನು ಆಲಿಸಿದರು; ಅವರು ಆ ಕಾನಾನ್ಯರನ್ನು ಜಯಿಸುವಂತೆ ಮಾಡಿದರು. ಇಸ್ರಯೇಲರು ಆ ಜನರನ್ನೂ ಅವರ ಗ್ರಾಮಗಳನ್ನೂ ನಿಶ್ಯೇಷವಾಗಿ ನಾಶಮಾಡಿಬಿಟ್ಟರು. ಈ ಕಾರಣ ಆ ಪ್ರದೇಶಕ್ಕೆ ‘ಹೊರ್ಮ‘ ಎಂದು ಹೆಸರಾಯಿತು.</verse>
				<verse number="4">ಇಸ್ರಯೇಲರು ಹೋರ್ ಬೆಟ್ಟದಿಂದ ಹೊರಟು ಎದೋಮ್ಯರ ನಾಡನ್ನು ಸುತ್ತಿಕೊಂಡು ಹೋಗುವುದಕ್ಕೆ ಕೆಂಪುಕಡಲಿನ ಮಾರ್ಗವಾಗಿ ಪ್ರಯಾಣ ಮಾಡಿದರು. ಈ ಮಾರ್ಗದ ಆಯಾಸದಿಂದ ಅವರಿಗೆ ಬೇಸರವಾಯಿತು.</verse>
				<verse number="5">ಆಗ ಅವರು ದೇವರಿಗೂ ಮೋಶೆಗೂ ವಿರುದ್ಧ ಮಾತಾಡತೊಡಗಿದರು: “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವಿಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಗಿದೆ,” ಎಂದು ಹೇಳತೊಡಗಿದರು.</verse>
				<verse number="6">ಅದಕ್ಕೆ ಸರ್ವೇಶ್ವರ ವಿಷಸರ್ಪಗಳನ್ನು ಅವರ ನಡುವೆ ಬರಮಾಡಿದರು. ಅವು ಆ ಜನರನ್ನು ಕಚ್ಚಿದವು. ಬಹುಜನ ಸತ್ತುಹೋದರು.</verse>
				<verse number="7">ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿಮಗೂ ಸರ್ವೇಶ್ವರನಿಗೂ ವಿರುದ್ಧ ಮಾತಾಡಿ ದೋಷಿಗಳಾದೆವು. ಈ ಸರ್ಪಗಳು ನಮ್ಮನ್ನು ಬಿಟ್ಟು ತೊಲಗುವಂತೆ ಸರ್ವೇಶ್ವರನನ್ನು ಪ್ರಾರ್ಥಿಸಿ,” ಎಂದು ಬೇಡಿಕೊಂಡರು.</verse>
				<verse number="8">ಮೋಶೆ ಜನರ ಪರವಾಗಿ ಪ್ರಾರ್ಥಿಸಿದನು. ಸರ್ವೇಶ್ವರ ಅವನಿಗೆ, “ನೀನು ಕಂಚಿನಿಂದ ವಿಷಸರ್ಪದ ಆಕಾರವನ್ನು ಮಾಡಿಸಿ, ಧ್ವಜಸ್ತಂಭದ ಮೇಲೆ ಎತ್ತಿ ನಿಲ್ಲಿಸು. ಸರ್ಪಗಳಿಂದ ಗಾಯಗೊಂಡ ಪ್ರತಿ ಒಬ್ಬನು ಅದನ್ನು ನೋಡಿ ಬದುಕಿಕೊಳ್ಳುವನು,” ಎಂದು ಆಜ್ಞಾಪಿಸಿದರು.</verse>
				<verse number="9">ಅಂತೆಯೇ ಮೋಶೆ ಕಂಚಿನಿಂದ ಸರ್ಪದ ಆಕಾರವನ್ನು ಮಾಡಿಸಿ ಧ್ವಜಸ್ತಂಭದ ಮೇಲೆ ಇಡಿಸಿದನು. ಸರ್ಪಗಳಿಂದ ಗಾಯಗೊಂಡವರಲ್ಲಿ ಯಾರು ಯಾರು ಆ ಕಂಚಿನ ಸರ್ಪವನ್ನು ಲಕ್ಷ್ಯವಿಟ್ಟು ನೋಡಿದರೋ ಅವರೆಲ್ಲರೂ ಬದುಕಿಕೊಂಡರು.</verse>
				<verse number="10">ತರುವಾಯ ಇಸ್ರಯೇಲರು ಅಲ್ಲಿಂದ ಹೊರಟು ಓಬೋತಿನಲ್ಲಿ ಇಳಿದುಕೊಂಡರು.</verse>
				<verse number="11">ಓಬೋತಿನಿಂದ ಹೊರಟು ಮೋವಾಬ್ ನಾಡಿನ ಪೂರ್ವ ದಿಕ್ಕಿನ ಮರುಭೂಮಿಯಲ್ಲಿ ಇಯ್ಯೇಅಬಾರೀಮಿನಲ್ಲಿ ಇಳಿದುಕೊಂಡರು.</verse>
				<verse number="12">ಅಲ್ಲಿಂದ ಹೊರಟು ಜೆರೆಬ್‍ ಕಣಿವೆಯಲ್ಲಿ ಇಳಿದುಕೊಂಡರು.</verse>
				<verse number="13">ಅಲ್ಲಿಂದ ಹೊರಟು ಅರ್ನೋನ್ ಹೊಳೆಯ ಆಚೆಕಡೆಯಲ್ಲಿ ಇಳಿದುಕೊಂಡರು. ಅರ್ನೋನ್ ಹೊಳೆ ಅಮೋರಿಯರ ಪ್ರದೇಶದಿಂದಾಚೆ ಇರುವ ಮರುಭೂಮಿಯಲ್ಲಿ ಮೋವಾಬ್ಯರಿಗೂ ಅಮೋರಿಯರಿಗೂ ನಡುವೆ ಇದ್ದು ಮೋಬಾಬ್ಯರ ಎಲ್ಲೆಯಾಗಿದೆ.</verse>
				<verse number="14">ಅದನ್ನು ಉಲ್ಲೇಖಿಸುತ್ತಾ, “ಸರ್ವೇಶ್ವರನ ವಿಷಯ” ಎಂಬ ಗ್ರಂಥ ಹೀಗೆನ್ನುತ್ತದೆ: ‘ಸೂಫಕ್ಕೆ ಸೇರಿದ ವಾಹೇಬನ್ನು, ಅರ್ನೋನ್ ಹೊಳೆಗೆ ಕೂಡುವ ಹಳ್ಳಗಳನ್ನು,</verse>
				<verse number="15">ಆರ್ ಪಟ್ಟಣದ ತನಕ ಮೋವಾಬಿನ ಎಲ್ಲೆಯಾಗಿರುವ ಕೊರಕಲನ್ನು’ ದಾಟಿದ್ದಾಯಿತು.</verse>
				<verse number="16">ಅಲ್ಲಿಂದ ಅವರು ಬೇರ್ ಎಂಬ ಸ್ಥಳಕ್ಕೆ ಬಂದರು. “ಜನರನ್ನು ಸೇರಿಸು, ಅವರಿಗೆ ಜಲಧಾರೆಯನ್ನು ಕೊಡುವೆನು” ಎಂದು ಸರ್ವೇಶ್ವರ ಮೋಶೆಗೆ ಹೇಳಿದ್ದು ಇಲ್ಲಿನ ಬಾವಿಯನ್ನು ಕುರಿತೇ.</verse>
				<verse number="17">ಆ ಕಾಲದಲ್ಲಿ ಇಸ್ರಯೇಲರು ಹಾಡಿದ ಗೀತೆ ಇದು: ಬಾವಿಯೇ, ಎದ್ದು ಬಾ ಉಕ್ಕುತ್ತಾ ಜನರೇ, ಹಾಡಿ ಹಿಗ್ಗುತ್ತಾ!</verse>
				<verse number="18">ಹಿರಿಯರು ತೋಡಿದರೀ ಬಾವಿಯನ್ನು ಕೋಲುಕಡ್ಡಿಗಳಿಂದ ಪ್ರಜಾಧಿಪತಿಗಳು ಅಗೆದರಿದನ್ನು ರಾಜದಂಡಗಳಿಂದ.</verse>
				<verse number="19">ಅವರು ಮರುಭೂಮಿಯನ್ನು ಬಿಟ್ಟು ಮತ್ತಾನಕ್ಕೂ ಮತ್ತಾನದಿಂದ ನಹಲೀಯೇಲಿಗೂ ನಹಲೀಯೇಲಿನಿಂದ ಬಾಮೋತಿಗೂ ಬಂದರು.</verse>
				<verse number="20">ಬಾಮೋತಿನಿಂದ ಮೋವಾಬ್ಯರ ಬೈಲುಪ್ರದೇಶದಲ್ಲಿರುವ ಕಣಿವೆಗೆ, ಅಂದರೆ ‘ಪಿಸ್ಗಾ’ ಎಂಬ ಮಲೆನಾಡಿನ ಅಂಚಿಗೆ ಬಂದರು. ಕೆಳಗಿರುವ ‘ಯೆಷೀಮೋನ್’ ಎಂಬ ಮರಳುಗಾಡು ಆ ಗುಡ್ಡದ ಮೇಲಿಂದ ಕಾಣಿಸುತ್ತದೆ.</verse>
				<verse number="21">ಇಸ್ರಯೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳಿಸಿದರು.</verse>
				<verse number="22">“ನಿಮ್ಮ ನಾಡನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು, ನಾವು ಹೊಲಗದ್ದೆಗಳ ಮೇಲಾಗಲಿ, ದ್ರಾಕ್ಷಿತೋಟಗಳ ಮೂಲಕವಾಗಲಿ ಹಾದುಹೋಗುವುದಿಲ್ಲ; ನಿಮ್ಮ ನಾಡನ್ನು ದಾಟುವವರೆಗೂ ರಾಜಮಾರ್ಗದಲ್ಲೇ ನಡೆದುಹೋಗುತ್ತೇವೆ,” ಎಂದು ಹೇಳಿಸಿದರು.</verse>
				<verse number="23">ಆದರೆ ಸೀಹೋನನು ತನ್ನ ನಾಡನ್ನು ದಾಟುವುದಕ್ಕೆ ಇಸ್ರಯೇಲರಿಗೆ ಅಪ್ಪಣೆಕೊಡಲಿಲ್ಲ. ಬದಲಿಗೆ ಅವರನ್ನು ಎದುರಿಸಲು ತನ್ನ ಜನರೆಲ್ಲರನ್ನು ಕೂಡಿಸಿಕೊಂಡು ಮರುಭೂಮಿಗೆ ಹೊರಟು, ಯಹಚಕ್ಕೆ ಬಂದು, ಅವರೊಡನೆ ಯುದ್ಧಮಾಡಿದನು.</verse>
				<verse number="24">ಇಸ್ರಯೇಲರು ಅವನ ಜನರನ್ನು ಸೋಲಿಸಿದರು, ಕತ್ತಿಯಿಂದ ಸಂಹರಿಸಿದರು. ಅರ್ನೋನ್ ಹೊಳೆಯಿಂದ ಯಬ್ಬೋಕ್ ಹೊಳೆಯವರೆಗೂ ಹಾಗೂ ಅಮ್ಮೋನಿಯರ ಎಲ್ಲೆಯವರೆಗೂ ಇದ್ದ ಸೀಹೋನನ ನಾಡನ್ನೆಲ್ಲಾ ಸ್ವಾಧೀನ ಮಾಡಿಕೊಂಡರು. ಅಮ್ಮೋನಿಯರ ಎಲ್ಲೆ ಒಂದು ದುರ್ಗವಾಗಿತ್ತು.</verse>
				<verse number="25">ಇಸ್ರಯೇಲರು ಈ ಪಟ್ಟಣಗಳನ್ನೆಲ್ಲಾ ವಶಮಾಡಿಕೊಂಡರು. ಹೆಷ್ಬೋನಿನಲ್ಲೂ ಅದಕ್ಕೆ ಸೇರಿದ ಗ್ರಾಮಗಳಲ್ಲೂ ಅಮೋರಿಯರ ಬೇರೆ ಎಲ್ಲಾ ಊರುಗಳಲ್ಲೂ ವಾಸಿಸಿದರು.</verse>
				<verse number="26">ಹೆಷ್ಬೋನ್ ಪಟ್ಟಣ ಅಮೋರಿಯರ ಅರಸನಾದ ಸೀಹೋನನ ರಾಜಧಾನಿ. ಅವನು ಮೋವಾಬ್ಯರ ಹಿಂದಿನ ಅರಸನ ಮೇಲೆ ಯುದ್ಧಮಾಡಿ ಅರ್ನೋನ್ ಹೊಳೆಯವರೆಗೂ ಅವನ ನಾಡನ್ನೆಲ್ಲಾ ಸ್ವಾಧೀನಮಾಡಿಕೊಂಡಿದ್ದನು.</verse>
				<verse number="27">ಈ ವಿಷಯವಾಗಿಯೇ ಕವಿಗಳು ಹೀಗೆಂದು ಹಾಡಿದ್ದಾರೆ: ಹೆಷ್ಬೋನಿಗೆ ಬನ್ನಿ, ಕಟ್ಟಿ ಅದನ್ನು ಪುನಃ ಮತ್ತೆ ಸ್ಥಾಪನೆ ಆಗಲಿ ಸೀಹೋನನಾ ಪಟ್ಟಣ.</verse>
				<verse number="28">ಸೀಹೋನನಾ ಪಟ್ಟಣ, ಆ ಹೆಷ್ಬೋನ್, ಅಲ್ಲಿಂದಲೆ ಹೊರಟು ಬಂದಿತು ಅಗ್ನಿಜ್ವಾಲೆ. ದಹಿಸಿ ಬಿಟ್ಟಿತದು ಮೋವಾಬ್ಯರ ರಾಜಧಾನಿಯಾದ ಆರ್ ನಗರವನ್ನು, ಅರ್ನೋನ್ ಹೊಳೆಯ ಬಳಿಯ ಪೂಜಾಸ್ಥಳಗಳ ದೇವತೆಗಳನ್ನು.</verse>
				<verse number="29">ಮೋವಾಬ್ಯರೇ, ನಿಮಗೆ ಧಿಕ್ಕಾರ! ಕೆಮೋಷಿನ ಭಕ್ತರೇ, ನಿಮಗೆ ಪರಿವಿನಾಶ! ಮಾಡಿಹನಾತ ತನ್ನ ಕುವರರನ್ನು ದೇಶಭ್ರಷ್ಟರನ್ನಾಗಿ ತನ್ನ ಕುವರಿಯರನ್ನು ಸೆರೆಯಾಳುಗಳನ್ನಾಗಿ ಅಮೋರಿಯರ ಅರಸ ಸೀಹೋನನಿಗೆ ಸೆರೆಯವರನ್ನಾಗಿ.</verse>
				<verse number="30">ಅವರನ್ನು ಹೊಡೆದೆವು ನಾವು ಬಿಲ್ಲುಬಾಣಗಳಿಂದ, ಹೆಷ್ಬೋನಿನಿಂದ ದೀಬೋನಿನವರೆಗೆ ಸರ್ವನಾಶ! ಹಾಳು ಮಾಡಿದೆವು ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ.</verse>
				<verse number="31">ಹೀಗೆ ಇಸ್ರಯೇಲರು ಅಮ್ಮೋನಿಯರ ನಾಡಿನಲ್ಲಿ ವಾಸಮಾಡುವಂತಾಯಿತು.</verse>
				<verse number="32">ಬಳಿಕ ಮೋಶೆ ಯಗ್ಜೇರನ್ನು ನೋಡಿ ಬರಲು ಗೂಢಚಾರರನ್ನು ಕಳಿಸಿದನು. ಇದಾದ ಬಳಿಕ ಇಸ್ರಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.</verse>
				<verse number="33">ಇಸ್ರಯೇಲರು ಹಿಂದಿರುಗಿ ಬಾಷಾನಿನ ಮಾರ್ಗವಾಗಿ ಪ್ರಯಾಣ ಮಾಡಿದರು. ಬಾಷಾನಿನ ಅರಸ ಓಗನು ತನ್ನ ಜನರೆಲ್ಲರೊಡನೆ ಅವರಿಗೆ ವಿರುದ್ಧ ಯುದ್ಧಮಾಡಲು ಎದ್ರೈವೂರಿಗೆ ಹೊರಟುಬಂದನು.</verse>
				<verse number="34">ಸರ್ವೇಶ್ವರ ಮೋಶೆಗೆ, “ಅವನಿಗೆ ಭಯಪಡಬೇಡ; ಅವನನ್ನೂ ಅವನ ಸಮಸ್ತ ಪ್ರಜೆಯನ್ನೂ ನಾಡನ್ನೂ ನಿನ್ನ ಕೈವಶಮಾಡಿದ್ದೇನೆ. ನೀನು ಹೆಷ್ಬೋನಿನಲ್ಲಿ ಅಮೋರಿಯರ ಅರಸ ಸೀಹೋನನಿಗೆ ಮಾಡಿದಂತೆಯೇ ಇವನಿಗೂ ಮಾಡು,” ಎಂದು ಹೇಳಿದರು.</verse>
				<verse number="35">ಹಾಗೆಯೇ ಇಸ್ರಯೇಲರು ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ, ಒಬ್ಬನನ್ನೂ ಬಿಡದೆ ಕೊಂದು ಅವನ ನಾಡನ್ನು ಸ್ವಾಧೀನಪಡಿಸಿಕೊಂಡರು.</verse>
			</chapter>
			<chapter number="22">
				<verse number="1">ಇಸ್ರಯೇಲರು ಪ್ರಯಾಣಮಾಡಿ ಜೋರ್ಡನ್ ನದಿತೀರದಲ್ಲಿ ಜೆರಿಕೋ ನಗರಕ್ಕೆ ಹತ್ತಿರವಿರುವ ಮೋವಾಬ್ಯರ ಬೈಲಿನಲ್ಲಿ ಇಳಿದುಕೊಂಡರು.</verse>
				<verse number="2">ಆ ಕಾಲದಲ್ಲಿ ಚಿಪ್ಪೋರನ ಮಗನಾದ ಬಾಲಾಕನು ಮೋವಾಬ್ಯರಿಗೆ ಅರಸನಾಗಿದ್ದನು. ಇಸ್ರಯೇಲರು ಅಮೋರಿಯರನ್ನು ಕೊಂದ ವರ್ತಮಾನವನ್ನು ಈತ ಕೇಳಿದ್ದನು.</verse>
				<verse number="3">ಇಸ್ರಯೇಲರು ಬಹುಮಂದಿ ಇದ್ದುದರಿಂದ ಮೋವಾಬ್ಯರು ಬಹಳವಾಗಿ ದಿಗಿಲುಪಟ್ಟರು; ಇಸ್ರಯೇಲರ ವಿಷಯದಲ್ಲಿ ಸಹಿಸಲಾರದಷ್ಟು ಹೆದರಿಕೆಯುಳ್ಳವರಾದರು.</verse>
				<verse number="4">ಮಿದ್ಯಾನ್ಯರ ಹಿರಿಯರಿಗೆ, “ದನಕರುಗಳು ಅಡವಿಯ ಹುಲ್ಲನ್ನೆಲ್ಲಾ ಮೇದುಬಿಡುವಂತೆ ಈ ಸಮುದಾಯದವರು ನಮ್ಮನ್ನೂ ನಮ್ಮ ಸುತ್ತಮುತ್ತಲಿನವರನ್ನೂ ನಿರ್ಮೂಲ ಮಾಡುವ ಹಾಗಿದೆ,” ಎಂದು ಎಚ್ಚರಿಸಿದರು.</verse>
				<verse number="5">ಬಾಲಾಕನು ಬೆಯೋರನ ಮಗ ಬಿಳಾಮನನ್ನು ಕರೆಸುವುದಕ್ಕೆ ಸ್ವಜನರ ನಾಡಾದ ಯೂಫ್ರೆಟಿಸ್ ನದಿಯ ತೀರದಲ್ಲಿರುವ ‘ಪೆತೋರ್’ ಎಂಬ ಊರಿಗೆ ದೂತರನ್ನು ಕಳಿಸಿದನು. “ತಾವು ದಯವಿಟ್ಟು ಬರಬೇಕು. ಯಾವುದೋ ಒಂದು ಜನಾಂಗ ಈಜಿಪ್ಟ್ ದೇಶದಿಂದ ಬಂದಿದೆ; ಭೂಮಿಯನ್ನೆಲ್ಲಾ ಆವರಿಸಿಕೊಂಡಿದೆ; ನನಗೆದುರಾಗಿ ಬಂದಿಳಿದಿದೆ. ಅವರು ನಮಗಿಂತ ಬಲಿಷ್ಠರು.</verse>
				<verse number="6">ಆದುದರಿಂದ ತಾವು ದಯಮಾಡಿ ಬಂದು ಈ ಜನಕ್ಕೆ ಶಾಪಹಾಕಿ ನಮಗೆ ನೆರವಾಗಬೇಕು. ಆಗ ಇವರನ್ನು ಸೋಲಿಸಿ ಈ ನಾಡಿನಿಂದ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು. ತಮ್ಮ ಆಶೀರ್ವಾದದಿಂದ ಶುಭ, ತಮ್ಮ ಶಾಪದಿಂದ ಅಶುಭವುಂಟಾಗುತ್ತದೆ ಎಂದು ನಾನು ಬಲ್ಲೆ,” ಎಂದು ಹೇಳಿಕಳಿಸಿದನು.</verse>
				<verse number="7">ಮೋವಾಬ್ಯರ ಹಾಗೂ ಮಿದ್ಯಾನ್ಯರ ಮುಖ್ಯಸ್ಥರು ಭವಿಷ್ಯವಾಣಿ ಕೇಳಲು ಸಲ್ಲಿಸಬೇಕಾದ ಕಾಣಿಕೆಯನ್ನು ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದರು. ಬಾಲಾಕನು ಹೇಳಿಕಳಿಸಿದ್ದ ಮಾತುಗಳನ್ನು ತಿಳಿಸಿದರು.</verse>
				<verse number="8">ಆಗ ಬಿಳಾಮನು, “ಈ ರಾತ್ರಿ ನೀವು ಇಲ್ಲೇ ತಂಗಿರಿ. ಸರ್ವೇಶ್ವರ ನನಗೆ ಕೊಡುವ ಉತ್ತರವನ್ನು ಬೆಳಿಗ್ಗೆ ತಿಳಿಸುವೆನು,” ಎಂದನು. ಅಂತೆಯೇ, ಮೋವಾಬ್ಯರ ಮುಖಂಡರು ಬಿಳಾಮನ ಬಳಿಯಲ್ಲಿ ಉಳಿದುಕೊಂಡರು.</verse>
				<verse number="9">ದೇವರು ಬಿಳಾಮನ ಬಳಿಗೆ ಬಂದು, “ನಿನ್ನ ಬಳಿ ತಂಗಿರುವ ಆ ಜನರು ಯಾರು?” ಎಂದು ವಿಚಾರಿಸಿದರು.</verse>
				<verse number="10">ಬಿಳಾಮನು, “ಮೋವಾಬ್ಯರ ಅರಸನು, ಅಂದರೆ ಚಿಪ್ಪೋರನ ಮಗ ಬಾಲಾಕನು ಅವರನ್ನು ನನ್ನ ಬಳಿಗೆ ದೂತರನ್ನಾಗಿ ಕಳಿಸಿದ್ದಾನೆ;</verse>
				<verse number="11">‘ದಯಮಾಡಿ ಬರಬೇಕು. ಯಾವುದೋ ಒಂದು ಜನಾಂಗ ಈಜಿಪ್ಟ್ ದೇಶದಿಂದ ಹೊರಟು ಬಂದಿದೆ; ಭೂಮಿಯನ್ನೆಲ್ಲಾ ಆವರಿಸಿಕೊಂಡಿದೆ; ನೀನು ಬಂದು ಅವರಿಗೆ ಶಾಪಹಾಕಬೇಕು; ಹಾಕಿದರೆ ಅವರನ್ನು ಸೋಲಿಸಿ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು,‘ ಎಂದು ಹೇಳಿಕಳಿಸಿದ್ದಾನೆ,” ಎಂದು ಉತ್ತರಕೊಟ್ಟನು.</verse>
				<verse number="12">ಅದಕ್ಕೆ ದೇವರು, “ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದ ಹೊಂದಿದವರು. ಅವರನ್ನು ಶಪಿಸಬಾರದು,” ಎಂದು ಹೇಳಿಬಿಟ್ಟರು.</verse>
				<verse number="13">ಬೆಳಿಗ್ಗೆ ಬಿಳಾಮನು ಬಾಲಾಕನ ಮುಖಂಡರಿಗೆ, “ನಾನು ನಿಮ್ಮ ಜೊತೆಯಲ್ಲಿ ಬರುವುದಕ್ಕೆ ಸರ್ವೇಶ್ವರನ ಅಪ್ಪಣೆಯಿಲ್ಲ. ನೀವು ನಿಮ್ಮ ನಾಡಿಗೆ ತೆರಳಿ,” ಎಂದನು.</verse>
				<verse number="14">ಮೋವಾಬ್ಯರ ಮುಖಂಡರು ಹೊರಟು ಬಾಲಾಕನ ಬಳಿಗೆ ಬಂದರು. ಬಿಳಾಮನು ಬರಲು ಒಪ್ಪಲಿಲ್ಲವೆಂದು ತಿಳಿಸಿದರು.</verse>
				<verse number="15">ಬಾಲಾಕನು ಅವರಿಗಿಂತಲೂ ಹೆಚ್ಚು ಗಣ್ಯವಂತ ಮುಂದಾಳುಗಳನ್ನು ಹೆಚ್ಚು ಸಂಖ್ಯೆಯಲ್ಲಿ ಕಳಿಸಿದನು.</verse>
				<verse number="16">ಇವರು ಬಿಳಾಮನ ಬಳಿಗೆ ಬಂದು, “ಚಿಪ್ಪೋರನ ಮಗ ಬಾಲಾಕನು ತಮಗೆ ತಿಳಿಸುವುದು ಇದು: ‘ತಾವು ದಯಮಾಡಿ ನನ್ನ ಬಳಿಗೆ ಬರಲು ಅಡ್ಡಿಯನ್ನು ಒಡ್ಡಬೇಡಿ.</verse>
				<verse number="17">ನಾನು ತಮ್ಮನ್ನು ಬಹಳವಾಗಿ ಸನ್ಮಾನಿಸುವೆನು; ತಾವು ಏನು ಹೇಳಿದರೂ ಅದರಂತೆಯೇ ಮಾಡುವೆನು; ತಾವು ಅಗತ್ಯವಾಗಿ ಬಂದು ಈ ಜನಾಂಗದವರನ್ನು ಶಪಿಸಿ ನನಗೆ ನೆರವಾಗಬೇಕು’ ಎಂದು ಹೇಳಿಕಳಿಸಿದ್ದಾರೆ,” ಎಂದರು.</verse>
				<verse number="18">ಅದಕ್ಕೆ ಬಿಳಾಮನು, “ಬಾಲಾಕನು ತನ್ನ ಮನೆ ತುಂಬ ಬೆಳ್ಳಿ ಬಂಗಾರ ಕೊಟ್ಟರೂ ನಾನು ನನ್ನ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಚಿಕ್ಕದಾಗಿರಲಿ ದೊಡ್ಡದಾಗಿರಲಿ ಉಲ್ಲಂಘಿಸಲಾರೆ.</verse>
				<verse number="19">ನೀವು ಕೂಡ ಈ ರಾತ್ರಿ ಇಲ್ಲೇ ತಂಗಿರಿ, ಸರ್ವೇಶ್ವರ ಏನು ಹೇಳುತ್ತಾರೋ ಅದನ್ನು ತಿಳಿದುಕೊಳ್ಳುತ್ತೇನೆ,” ಎಂದು ಬಾಲಾಕನು ದೂತರಿಗೆ ಉತ್ತರಕೊಟ್ಟನು.</verse>
				<verse number="20">ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಆ ಜನರು ನಿನ್ನನ್ನು ಕರೆಯುವುದಕ್ಕೆ ಬಂದಿರುವುದರಿಂದ ಎದ್ದು ಅವರ ಜೊತೆಯಲ್ಲಿ ಹೋಗು; ಆದರೆ ನಾನು ಆಜ್ಞಾಪಿಸುವ ಪ್ರಕಾರವೇ ಮಾಡಬೇಕು,” ಎಂದರು.</verse>
				<verse number="21">ಬೆಳಿಗ್ಗೆ ಬಿಳಾಮನು ತನ್ನ ಕತ್ತೆಗೆ ತಡಿಹಾಕಿಸಿ ಮೋವಾಬ್ಯರ ಮುಂದಾಳುಗಳ ಜೊತೆಯಲ್ಲಿ ಹೊರಟನು.</verse>
				<verse number="22">ಬಿಳಾಮನು ಹೀಗೆ ಹೋದುದರಿಂದ ದೇವರಿಗೆ ಸಿಟ್ಟಾಯಿತು. ಸರ್ವೇಶ್ವರನ ದೂತನು ಅವನಿಗೆ ಎದುರಾಳಿಯಾಗಿ ದಾರಿಯಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಹತ್ತಿ ಇಬ್ಬರು ಆಳುಗಳ ಸಂಗಡ ಸವಾರಿ ಮಾಡುತ್ತಿದ್ದನು.</verse>
				<verse number="23">ಸರ್ವೇಶ್ವರನ ದೂತನು ಬಿಚ್ಚುಗತ್ತಿಯನ್ನು ಕೈಯಲ್ಲಿ ಹಿಡಿದು ದಾರಿಯಲ್ಲೇ ನಿಂತನು. ಇದನ್ನು ಕಂಡ ಆ ಕತ್ತೆ ದಾರಿಯನ್ನು ಬಿಟ್ಟು ಅಡವಿಯ ಕಡೆಹೋಯಿತು. ದಾರಿಗೆ ತಿರುಗಿಸಲು ಬಿಳಾಮನು ಅದನ್ನು ಹೊಡೆದನು.</verse>
				<verse number="24">ಬಳಿಕ ಸರ್ವೇಶ್ವರನ ದೂತನು ದ್ರಾಕ್ಷಿತೋಟಗಳ ಸಂದಿಯಲ್ಲಿ ನಿಂತನು. ಈ ಕಡೆಯಲ್ಲೂ ಗೋಡೆಯಿತ್ತು.</verse>
				<verse number="25">ಕತ್ತೆ ಆ ದೂತನನ್ನು ನೋಡಿ ಗೋಡೆಗೆ ಒತ್ತಿಕೊಂಡಿತು. ಬಿಳಾಮನ ಕಾಲನ್ನು ಆ ಗೋಡೆಗೆ ಇರುಕಿಸಿತು. ಅವನು ಅದನ್ನು ಮತ್ತೆ ಹೊಡೆದನು.</verse>
				<verse number="26">ಅನಂತರ ಸರ್ವೇಶ್ವರನ ದೂತನು ಮುಂದೆ ಹೋಗಿ ಎಡಕ್ಕಾಗಲಿ ಬಲಕ್ಕಾಗಲಿ ತಿರುಗಲು ದಾರಿಯಿಲ್ಲದೆ ಇಕ್ಕಟ್ಟಾದ ಒಂದು ಸ್ಥಳದಲ್ಲಿ ನಿಂತುಕೊಂಡನು.</verse>
				<verse number="27">ಕತ್ತೆ ಅವನನ್ನು ನೋಡಿ ಬಿಳಾಮನ ಕೆಳಗೆ ಬಿದ್ದುಕೊಂಡಿತು. ಬಿಳಾಮನು ಸಿಟ್ಟುಗೊಂಡು ಕೈಗೋಲಿನಿಂದ ಹೊಡೆದನು.</verse>
				<verse number="28">ಆಗ ಸರ್ವೇಶ್ವರ ಆ ಕತ್ತೆಗೆ ಮಾತಾಡುವ ಶಕ್ತಿಯನ್ನು ಕೊಟ್ಟರು. ಅದು ಬಿಳಾಮನಿಗೆ, “ನೀನು ಮೂರು ಸಾರಿ ನನ್ನನ್ನು ಹೊಡೆದದ್ದೇಕೆ? ನಾನು ನಿನಗೇನು ಮಾಡಿದೆ?” ಎಂದು ಪ್ರಶ್ನೆ ಹಾಕಿತು.</verse>
				<verse number="29">ಅದಕ್ಕೆ ಬಿಳಾಮನು, “ನೀನು ಇಷ್ಟಬಂದಂತೆ ನನ್ನನ್ನು ಅತ್ತಿತ್ತ ಆಡಿಸಿದೆ; ನನ್ನ ಕೈಯಲ್ಲಿ ಕತ್ತಿಯಿದ್ದಿದ್ದರೆ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆ,” ಎಂದನು.</verse>
				<verse number="30">ಅದಕ್ಕೆ ಆ ಕತ್ತೆ, “ನಿನ್ನ ಜೀವಮಾನವೆಲ್ಲ, ಇಂದಿನ ತನಕ ಸವಾರಿ ಮಾಡುತ್ತಿದ್ದ ಕತ್ತೆ ನಾನಲ್ಲವೆ? ನಾನು ಎಂದಾದರೂ ಈ ರೀತಿ ಮಾಡಿದ್ದುಂಟೆ?” ಎಂದಿತು. ಆಗ ಬಿಳಾಮನು “ಇಲ್ಲ” ಎಂದನು.</verse>
				<verse number="31">ಅಷ್ಟರಲ್ಲೇ ಸರ್ವೇಶ್ವರ ಬಿಳಾಮನ ಕಣ್ಣುಗಳನ್ನು ತೆರೆದರು. ಅವರ ದೂತನು ಬಿಚ್ಚುಕತ್ತಿಯನ್ನು ಹಿಡಿದು ದಾರಿಯಲ್ಲೆ ನಿಂತಿರುವುದನ್ನು ಕಂಡನು. ಕೂಡಲೆ ಅಡ್ಡಬಿದ್ದು ನಮಸ್ಕರಿಸಿದನು.</verse>
				<verse number="32">ಆಗ ಸರ್ವೇಶ್ವರನ ದೂತ, “ಮೂರು ಸಾರಿ ನಿನ್ನ ಕತ್ತೆಯನ್ನೇಕೆ ಹೊಡೆದೆ? ನೀನು ಹಿಡಿದ ಮಾರ್ಗ ಸರಿಯಲ್ಲ. ನಿನ್ನನ್ನು ತಡೆಗಟ್ಟಲು ನಾನೇ ಬಂದೆ.</verse>
				<verse number="33">ಈ ಕತ್ತೆ ನನ್ನನ್ನು ನೋಡಿ ಮೂರು ಸಾರಿ ನನ್ನೆದುರಿನಿಂದ ಪಕ್ಕಕ್ಕೆ ತಿರುಗಿಕೊಂಡಿತು. ಹಾಗೇ ತಿರುಗಿಕೊಳ್ಳದೆ ಹೋಗಿದ್ದರೆ ನಿನ್ನನ್ನು ಕೊಂದು ಕತ್ತೆಯನ್ನು ಉಳಿಸುತ್ತಿದ್ದೆ,” ಎಂದು ಹೇಳಿದನು.</verse>
				<verse number="34">ಅದಕ್ಕೆ ಬಿಳಾಮನು, “ನಾನು ಪಾಪಮಾಡಿದೆ, ನೀನೆ ನನಗೆದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯದೆ ಹೋಯಿತು. ನಾನು ಮಾಡುವುದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ತಿರುಗಿಕೊಳ್ಳುತ್ತೇನೆ,” ಎಂದನು.</verse>
				<verse number="35">ಆಗ ಸರ್ವೇಶ್ವರನ ದೂತನು, “ಆ ವ್ಯಕ್ತಿಗಳ ಸಂಗಡ ಹೋಗು. ಆದರೆ ನಾನು ನಿನಗೆ ಹೇಳುವುದನ್ನೇ ಹೊರತು ಬೇರೆ ಏನನ್ನೂ ಹೇಳಬೇಡ,” ಎಂದು ತಿಳಿಸಿದನು. ಬಿಳಾಮನು ಬಾಲಾಕನ ಮುಂದಾಳುಗಳ ಜೊತೆ ಹೊರಟನು.</verse>
				<verse number="36">ಬಿಳಾಮನು ಬಂದ ಸಮಾಚಾರ ಬಾಲಾಕನಿಗೆ ಮುಟ್ಟಿತು. ಅವನು ಬಿಳಾಮನನ್ನು ಬರಮಾಡಿಕೊಳ್ಳಲು ತನ್ನ ನಾಡಗಡಿಯಾದ ಅರ್ನೋನ್ ಹೊಳೆಯ ತೀರದಲ್ಲಿರುವ ಮೋವಾಬ್ಯರ ಪಟ್ಟಣಕ್ಕೆ ಹೊರಟುಬಂದನು.</verse>
				<verse number="37">ಅಲ್ಲಿ ಬಿಳಾಮನನ್ನು ಕಂಡು, “ತಮ್ಮನ್ನು ತುರ್ತಾಗಿ ಕರೆದುತರಲು ನಾನು ದೂತರನ್ನು ಕಳಿಸಿದೆನಲ್ಲವೆ? ತಾವೇಕೆ ಆಗಲೇ ಬರಲಿಲ್ಲ? ತಮಗೆ ಯೋಗ್ಯವಾದ ಸತ್ಕಾರ್ಯ ನೀಡಲು ನಾನು ಅಸಮರ್ಥನೇ?” ಎಂದನು.</verse>
				<verse number="38">ಅದಕ್ಕೆ ಬಿಳಾಮನು, “ಅದಿರಲಿ, ನಾನೀಗ ಬಂದಾಯಿತು, ಆದರೆ ನಾನಾಗಿ ಏನನ್ನು ಹೇಳುವ ಶಕ್ತಿ ನನಗಿಲ್ಲ, ದೇವರು ಆಡಿಸಿದ ಮಾತನ್ನೇ ಹೇಳಲು ಸಾಧ್ಯ,” ಎಂದು ಹೇಳಿದನು.</verse>
				<verse number="39">ಇದಾದ ಬಳಿಕ ಬಿಳಾಮನು ಬಾಲಾಕನೊಂದಿಗೆ ಹೋದನು. ಅವರು ಕಿರ್ಯತ್ ಹುಚೋತಿಗೆ ಬಂದರು.</verse>
				<verse number="40">ಬಾಲಾಕನು ಹೋರಿಗಳನ್ನು ಹಾಗೂ ಕುರಿಗಳನ್ನು ಕೊಂದು ಬಲಿಕೊಟ್ಟು, ಅವುಗಳ ಮಾಂಸವನ್ನು ಬಿಳಾಮನಿಗೂ ಅವನ ಸಂಗಡವಿದ್ದ ಮುಂದಾಳುಗಳಿಗೂ ಕಳಿಸಿದನು.</verse>
				<verse number="41">ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು ‘ಬಾಳ್’ ಎಂಬ ದೇವತೆಯ ಪೂಜಾಸ್ಥಳಗಳಿದ್ದ ಗುಡ್ಡವನ್ನು ಹತ್ತಿ ಇಸ್ರಯೇಲರ ಶಿಬಿರದೊಂದು ಭಾಗವನ್ನು ತೋರಿಸಿದನು.</verse>
			</chapter>
			<chapter number="23">
				<verse number="1">ಆಗ ಬಿಳಾಮನು, “ಇಲ್ಲಿ ಏಳು ಬಲಿಪೀಠಗಳನ್ನು ಕಟ್ಟಿಸಿ ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸು,” ಎಂದು ಬಾಲಾಕನಿಗೆ ಹೇಳಿದನು.</verse>
				<verse number="2">ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನು ಮತ್ತು ಬಿಳಾಮನು ಪ್ರತಿ ಬಲಿಪೀಠದ ಮೇಲೆ ಒಂದು ಹೋರಿಯನ್ನು ಹಾಗು ಒಂದು ಟಗರನ್ನು ದಹನಬಲಿದಾನವಾಗಿ ಸಮರ್ಪಿಸಿದರು.</verse>
				<verse number="3">ಬಳಿಕ ಬಿಳಾಮನು ಬಾಲಾಕನಿಗೆ, “ನೀನು ದಹನಬಲಿದಾನ ಮಾಡಿದ ಸ್ಥಳದಲ್ಲೇ ಇರು; ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ; ಸರ್ವೇಶ್ವರ ನನಗೆ ದರ್ಶನ ಕೊಟ್ಟರೂ ಕೊಡಬಹುದು. ಅವರು ಸೂಚಿಸುವ ಸಂಗತಿಗಳನ್ನು ನಿನಗೆ ತಿಳಿಸುತ್ತೇನೆ,” ಎಂದು ಹೇಳಿ ಮರಗಳಿಲ್ಲದ ಒಂದು ದಿಣ್ಣೆಗೆ ಹೋದನು.</verse>
				<verse number="4">ದೇವರು ಬಿಳಾಮನಿಗೆ ಎದುರಾಗಿ ಬಂದರು. ಬಿಳಾಮನು ಅವರಿಗೆ, “ನಾನು ಏಳು ಬಲಿಪೀಠಗಳನ್ನು ಕಟ್ಟಿಸಿ ಒಂದೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ದಹನಬಲಿಯಾಗಿ ಸಮರ್ಪಿಸಿದ್ದೇನೆ,” ಎಂದು ಹೇಳಿದನು.</verse>
				<verse number="5">ಸರ್ವೇಶ್ವರ ಬಿಳಾಮನಿಗೆ ಹೇಳಬೇಕಾದುದನ್ನು ಹೇಳಿ, “ನೀನು ಬಾಲಾಕನ ಬಳಿಗೆ ಹಿಂದಿರುಗಿ ಹೋಗಿ ನಾನು ಹೇಳಿದ್ದನ್ನು ತಿಳಿಸು,” ಎಂದು ಆಜ್ಞಾಪಿಸಿದರು.</verse>
				<verse number="6">ಬಿಳಾಮನು ಬಾಲಾಕನ ಬಳಿಗೆ ಬಂದಾಗ ತಾನು ದಹನಬಲಿಯನ್ನು ಸಮರ್ಪಿಸಿದ್ದ ಪೀಠದ ಹತ್ತಿರವೆ ನಿಂತಿದ್ದನು. ಮೋವಾಬ್ಯರ ಮುಖ್ಯಸ್ಥರೆಲ್ಲರು ಅವನ ಬಳಿಯಲ್ಲೆ ಇದ್ದರು. ಆಗ ಬಿಳಾಮನು ಪದ್ಯರೂಪದಲ್ಲಿ ಹೀಗೆಂದು ನುಡಿದನು:</verse>
				<verse number="7">“ಬಾಲಾಕನು ನನ್ನನ್ನು ಕರೆಸಿದ ಅರಾಮಿನಿಂದ ಮೋವಾಬರಸ ನನ್ನ ಬರಮಾಡಿದ ಮೂಡಲಗುಡ್ಡೆಗಳಿಂದ. ‘ನನ್ನ ಪರವಾಗಿ ಯಕೋಬವಂಶಜರನ್ನು ಶಪಿಸೆಂದ’ ‘ಹಾಕು ಇಸ್ರಯೇಲರಿಗೆ ಧಿಕ್ಕಾರ’ ಎಂದು ಹೇಳಿದ.</verse>
				<verse number="8">ದೇವರೇ ಶಪಿಸಿಲ್ಲದವರನ್ನು ನಾನೇನೆಂತು ಶಪಿಸಲಿ? ಸರ್ವೇಶ್ವರನೇ ಧಿಕ್ಕರಿಸಿಲ್ಲದವರನ್ನು ನಾನೇನೆಂತು ಧಿಕ್ಕರಿಸಲಿ?</verse>
				<verse number="9">ನಾನವರನ್ನು ಕಂಡೆ ಬೆಟ್ಟದ ಶಿಖರದಿಂದ ನೋಡಿದೆನವರನ್ನು ಗುಡ್ಡದೆತ್ತರದಿಂದ,</verse>
				<verse number="10">ಯಕೋಬ್ಯರು ಧೂಳಿನಷ್ಟು ಅಸಂಖ್ಯ ಅವರನ್ನು ಲೆಕ್ಕಿಸಲು ಯಾರಿಂದ ಸಾಧ್ಯ? ಕಾಲ್ಭಾಗವನ್ನಾದರೂ ಹೇಳಲು ಯಾರಿಂದ ಸಾಧ್ಯ? ನಾ ಸಾಯಬೇಕು ಆ ಸಜ್ಜನರು ಸಾಯುವ ರೀತಿ ನನ್ನದಾಗಬೇಕು ಅವರಿಗಾಗುವ ಅಂತ್ಯಗತಿ.”</verse>
				<verse number="11">ಈ ನುಡಿಗಳನ್ನು ಕೇಳಿದ ಬಾಲಾಕನು ಅವನಿಗೆ, “ಇದೇನು ನೀವು ಮಾಡಿದ್ದು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಾನು ನಿಮ್ಮನ್ನು ಕರೆದೆ. ಶಪಿಸುವುದಕ್ಕೆ ಬದಲು ಅವರನ್ನು ಆಶೀರ್ವದಿಸಿಬಿಟ್ಟಿರಲ್ಲಾ?” ಎಂದು ಹೇಳಿದನು.</verse>
				<verse number="12">ಅದಕ್ಕೆ ಬಿಳಾಮನು, “ಸರ್ವೇಶ್ವರ ನುಡಿಸುವುದನ್ನೇ ನಾನು ನುಡಿಯಬೇಕಾಗಿದೆಯಲ್ಲವೆ?” ಎಂದುಬಿಟ್ಟನು.</verse>
				<verse number="13">ಆಗ ಬಾಲಾಕನು, “ದಯಮಾಡಿ ನನ್ನೊಡನೆ ಇನ್ನೊಂದು ಸ್ಥಳಕ್ಕೆ ಬನ್ನಿ. ಅಲ್ಲಿಂದಲೂ ಅವರನ್ನು ನೋಡಬಹುದು. ಆದರೆ ಅವರೆಲ್ಲರೂ ಕಾಣಿಸರು. ಅವರ ಒಂದು ಕೊನೆ ತುಣುಕು ಮಾತ್ರ ಕಾಣಿಸುವುದು.</verse>
				<verse number="14">ಅಲ್ಲಿಂದ ನನ್ನ ಪರವಾಗಿ ಅವರನ್ನು ಶಪಿಸಬೇಕು” ಎಂದು ಹೇಳಿ ಪಿಸ್ಗಾ ಬೆಟ್ಟದ ತುದಿಯಲ್ಲಿರುವ ‘ಚೋಫೀಮ್ ಬೈಲು’ ಎಂಬ ಸ್ಥಳಕ್ಕೆ ಕರೆದುಕೊಂಡು ಹೋದನು. ಅಲ್ಲಿಯೂ ಏಳು ಬಲಿಪೀಠಗಳನ್ನು ಕಟ್ಟಿಸಿ ಪ್ರತಿ ಒಂದು ಪೀಠದಲ್ಲಿ ಒಂದು ಹೋರಿ ಮತ್ತು ಟಗರನ್ನು ದಹನಬಲಿಯಾಗಿ ಸಮರ್ಪಿಸಿದನು.</verse>
				<verse number="15">ಬಿಳಾಮನು ಅವನಿಗೆ, “ನೀನು ಇಲ್ಲಿ ದಹನಬಲಿಯರ್ಪಿಸುವ ಸ್ಥಳದಲ್ಲಿರು. ನಾನು ಅತ್ತ ಕಡೆ ಹೋಗಿ (ಸರ್ವೇಶ್ವರನನ್ನು) ಸಂದರ್ಶಿಸಿ ಬರುತ್ತೇನೆ,” ಎಂದು ಹೇಳಿಹೋದನು.</verse>
				<verse number="16">ಸರ್ವೇಶ್ವರ ಬಿಳಾಮನಿಗೆ ದರ್ಶನಕೊಟ್ಟು ಅವನು ಹೇಳಬೇಕಾದುದನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹಿಂದಿರುಗಿ ನಾನು ಹೇಳಿದಂತೆಯೇ ತಿಳಿಸು,” ಎಂದರು.</verse>
				<verse number="17">ಬಿಳಾಮನು ಬಾಲಾಕನ ಬಳಿಗೆ ಬಂದಾಗ ಬಾಲಾಕನು ತಾನು ದಹನಬಲಿಯನ್ನು ಸಮರ್ಪಿಸಿದ ಪೀಠದ ಹತ್ತಿರವೇ ನಿಂತಿದ್ದನು. ಮೋವಾಬ್ಯರ ಮುಖ್ಯಸ್ಥರು ಅವನ ಸಂಗಡವೇ ಇದ್ದರು.</verse>
				<verse number="18">ಬಿಳಾಮನು ಪದ್ಯರೂಪವಾಗಿ ಹೀಗೆಂದು ನುಡಿದನು: “ಬಾಲಾಕನೇ, ಕಿವಿಗೊಟ್ಟು ಕೇಳು: ಚಿಪ್ಪೋರನ ಪುತ್ರನೇ, ನನ್ನ ಮಾತನ್ನು ಆಲಿಸು:</verse>
				<verse number="19">ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?</verse>
				<verse number="20">ಆ ಜನರನ್ನು ಆಶೀರ್ವದಿಸಬೇಕೆಂಬ ಆದೇಶ ನನಗಿರುವುದು; ಸರ್ವೇಶ್ವರನಿತ್ತ ಆಶೀರ್ವಾದವನ್ನು ನಾನು ಮಾರ್ಪಡಿಸಲಾಗದು.</verse>
				<verse number="21">ಈ ಯಕೋಬ್ಯರಲ್ಲಿಲ್ಲ ಆಪತ್ತಿನ ಸೂಚನೆ ಈ ಇಸ್ರಯೇಲರಲ್ಲಿಲ್ಲ ವಿಪತ್ತಿನ ಸಾಧ್ಯತೆ ಸರ್ವೇಶ್ವರನೇ ಇಹನು ಅವರ ಸಂಗಡ ದೇವರಾಗಿ ಜಯಘೋಷ ಕೇಳಿಸುತ್ತಿದೆ ಅವರ ಅರಸನಿಗಾಗಿ!</verse>
				<verse number="22">ಅವರನ್ನು ದೇವರೇ ಕರೆದು ತಂದ ಈಜಿಪ್ಟಿನಿಂದ ಅವರಿಗಿದೆ ಕಾಡುಕೋಣದಂಥ ಶಕ್ತಿಸಾಮರ್ಥ್ಯ!</verse>
				<verse number="23">ಯಕೋಬ್ಯರಿಗೆ ವಿರುದ್ಧವಾದ ಶಕುನವಿಲ್ಲ ಇಸ್ರಯೇಲರಿಗೆ ವಿರುದ್ಧವಾದ ತಂತ್ರಮಂತ್ರವಿಲ್ಲ. ತಾನು ಮಾಡುವುದನ್ನು ತತ್ಕಾಲದಲ್ಲೇ ದೇವ ತಿಳಿಸುತ್ತಾನೆ ಯಕೋಬ್ಯರಿಗೆ ಅದನ್ನು ಸೂಚಿಸುತ್ತಾನೆ ಸಮಯೋಚಿತವಾಗಿ ಆ ಇಸ್ರಯೇಲರಿಗೆ.</verse>
				<verse number="24">ಈ ಜನಾಂಗ ಯುವಸಿಂಹದಂತೆ ನಿಂತಿಹುದು ಮೃಗೇಂದ್ರನಂತೆ ಮೃಗ ಕೊಂದು, ರಕ್ತ ಕುಡಿದು, ಮಾಂಸ ತಿಂದು, ತೃಪ್ತಿಹೊಂದದ ಹೊರತು ಆ ಸಿಂಹ ವಿರಮಿಸದು.”</verse>
				<verse number="25">ಆಗ ಬಾಲಾಕನು ಅವನಿಗೆ, “ಹಾಗಾದರೆ ನೀನು ಅವರನ್ನು ಶಪಿಸಲೂ ಬೇಡ, ಆಶೀರ್ವದಿಸಲೂ ಬೇಡ,” ಎಂದನು.</verse>
				<verse number="26">ಅದಕ್ಕೆ ಬಿಳಾಮನು, “ಸರ್ವೇಶ್ವರ ಆಜ್ಞಾಪಿಸಿದ್ದನ್ನೇ ನಾನು ಮಾಡಬೇಕೆಂದು ನಿನಗೆ ಹೇಳಲಿಲ್ಲವೆ?” ಎಂದನು.</verse>
				<verse number="27">ಆ ಬಳಿಕ ಬಾಲಾಕನು, “ಬಾ, ನಿನ್ನನ್ನು ಬೇರೊಂದು ಸ್ಥಳಕ್ಕೆ ಕರೆದುಕೊಂಡು ಹೋಗುತ್ತೇನೆ. ಬಹುಶಃ ಅಲ್ಲಿಯಾದರು ನೀನು ಅವರನ್ನು ಶಪಿಸುವಂತೆ ದೇವರು ಅನುಮತಿಸಬಹುದು,” ಎಂದು ಹೇಳಿದನು.</verse>
				<verse number="28">ಅಲ್ಲಿಂದ ಅವನನ್ನು ಪೆಗೋರ್ ಎಂಬ ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಆ ಬೆಟ್ಟದ ಕೆಳಗಿರುವ ‘ಯೆಷೀಮೋನ್’ ಎಂಬ ಮರುಭೂಮಿ ಕಾಣಿಸುತ್ತಿತ್ತು.</verse>
				<verse number="29">ಬಿಳಾಮನು ಬಾಲಾಕನಿಗೆ, “ಇಲ್ಲೂ, ಏಳು ಬಲಿಪೀಠಗಳನ್ನು ಕಟ್ಟಿಸಿ, ಏಳು ಹೋರಿಗಳನ್ನು ಹಾಗು ಏಳು ಟಗರುಗಳನ್ನು ಸಿದ್ಧಪಡಿಸು,” ಎಂದನು.</verse>
				<verse number="30">ಬಾಲಾಕನು ಅಂತೆಯೇ ಮಾಡಿ ಪ್ರತಿಯೊಂದು ಪೀಠದಲ್ಲೂ ಒಂದು ಹೋರಿಯನ್ನೂ ಒಂದು ಟಗರನ್ನೂ ದಹನಬಲಿಯಾಗಿ ಸಮರ್ಪಿಸಿದನು.</verse>
			</chapter>
			<chapter number="24">
				<verse number="1">ಇಸ್ರಯೇಲರಿಗೆ ಶುಭವಾಗಬೇಕು ಎಂಬುದೇ ಸರ್ವೇಶ್ವರನ ಚಿತ್ತ ಎಂದು ಅರಿತ ಬಿಳಾಮನು ಮೊದಲಿನಂತೆ ಶಕುನ ನೋಡಲು ಹೋಗಲಿಲ್ಲ. ಬದಲಿಗೆ ಮರುಭೂಮಿಯ ಕಡೆ ಮುಖ ತಿರುಗಿಸಿಕೊಂಡು ಕಣ್ಣೆತ್ತಿ ನೋಡಿದನು.</verse>
				<verse number="2">ಕುಲಗಳ ಅನುಸಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಯೇಲರು ಅವನಿಗೆ ಕಾಣಿಸಿದರು.</verse>
				<verse number="3">ಆಗ ಅವನು ದೇವಾತ್ಮಪ್ರೇರಿತನಾಗಿ ಪದ್ಯರೂಪದಲ್ಲಿ ಇಂತೆಂದು ಭವಿಷ್ಯ ನುಡಿದನು: “ಇದು ಬೆಯೋರನ ಮಗ ಬಿಳಾಮನ ಭವಿಷ್ಯವಾಣಿ: ಮನೋದೃಷ್ಟಿಯಿಂದ ನೋಡುವ ಪುರುಷನ ವಾಣಿ</verse>
				<verse number="4">ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದಾ ವ್ಯಕ್ತಿಯ ವಾಣಿ.</verse>
				<verse number="5">ಯಕೋಬ್ಯರೇ, ನಿಮ್ಮ ಡೇರೆಗಳೆಷ್ಟು ರಮ್ಯ! ಇಸ್ರಯೇಲರೇ, ನಿಮ್ಮ ನಿವಾಸಗಳೆಷ್ಟು ಸುಂದರ!</verse>
				<verse number="6">ಅವಿವೆ ಉದ್ದುದ್ದ ಚಾಚಿಕೊಂಡಿರುವ ಕಣಿವೆಗಳಂತೆ ನದಿಯ ಬಳಿಯಿರುವ ತೋಟಗಳಂತೆ ಸರ್ವೇಶ್ವರ ನೆಟ್ಟ ಅಗರುಮರಗಳಂತೆ, ನೀರ ಬದಿಯ ದೇವದಾರು ವೃಕ್ಷಗಳಂತೆ.</verse>
				<verse number="7">ನೀರು ಹರಿಯುತ್ತಲೇ ಇದೆ ಅವರ ಕಪಿಲೆಗಳಿಂದ ಅವರ ಬಿತ್ತನೆಗೆ ನೀರಿನ ಕೊರತೆಯೆಂಬುದಿಲ್ಲ. ಅಗಾಗ್ ರಾಜನಿಗಿಂತ ಶ್ರೇಷ್ಠ ಅವರ ಅರಸ ಅಭಿವೃದ್ಧಿಯಾಗುತ್ತಿದೆ ಅವರ ರಾಜ್ಯ.</verse>
				<verse number="8">ಅವರನ್ನು ದೇವರೇ ಕರೆದು ತಂದರು ಈಜಿಪ್ಟಿನಿಂದ ಅವರಿಗಿದೆ ಕಾಡುಕೋಣದಂಥ ಶಕ್ತಿಸಾಮರ್ಥ್ಯ. ನಿರ್ಮೂಲ ಮಾಡುವರವರು ಶತ್ರುಗಳನ್ನು ಮುರಿದು ಹಾಕುವರು ವೈರಿಗಳ ಎಲುಬುಗಳನ್ನು; ನುಚ್ಚುನೂರು ಮಾಡುವರು ಅವರ ಬಿಲ್ಲುಬಾಣಗಳನ್ನು.</verse>
				<verse number="9">ಕಾಲು ಮಡಚಿ ಹೊಂಚುಕೂತ ಸಿಂಹದಂತಿದೆ ಆ ಜನಾಂಗ; ಕೆಣಕಲು ಯಾರಿಂದಾದೀತು, ಅದು ಮೃಗೇಂದ್ರನಿಗೆ ಸಮಾನ!</verse>
				<verse number="10">ಇದನ್ನು ಕೇಳಿ ಬಾಲಾಕನಿಗೆ ಬಿಳಾಮನ ಮೇಲೆ ಕಡುಕೋಪ ಉಂಟಾಯಿತು. ಅವನು ಕೈಕೈಹಿಸಿಕಿಕೊಂಡು ಬಿಳಾಮನಿಗೆ, “ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆ; ಆದರೆ ನೀನು ಮೂರು ಸಾರಿಯೂ ಅವರನ್ನೇ ಆಶೀರ್ವದಿಸಿದೆ.</verse>
				<verse number="11">ಆದುದರಿಂದ ನಿನ್ನ ಊರಿಗೆ ತೆರಳು. ನಿನ್ನನ್ನು ಬಹಳವಾಗಿಸನ್ಮಾನಿಸಬೇಕೆಂದಿದ್ದೆ. ಆದರೆ ನಿನಗೆ ಸನ್ಮಾನ ಕೂಡದೆಂದು ಸರ್ವೇಶ್ವರ ಆಜ್ಞೆಮಾಡಿದ್ದಾನೆ,” ಎಂದನು.</verse>
				<verse number="12">ಅದಕ್ಕೆ ಬಿಳಾಮನು, “ನೀನು ನಿನ್ನ ಮನೆತುಂಬ ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಸರ್ವೇಶ್ವರನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಏನನ್ನೂ ಮಾಡಲಾರೆ.</verse>
				<verse number="13">ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮಾಡುವೆನೆಂದು ನೀನು ನನ್ನ ಬಳಿಗೆ ಕಳಿಸಿದ ದೂತರಿಗೆ ನಾನು ಹೇಳಲಿಲ್ಲವೆ?</verse>
				<verse number="14">ಆಗಲಿ, ನಾನು ನನ್ನ ಸ್ವಜನರ ಬಳಿಗೆ ತೆರಳುತ್ತೇನೆ. ಆದರೆ ಈ ಜನರು ನಿನ್ನ ಜನರಿಗೆ ಕೊನೆಗೆ ಏನು ಮಾಡುವರೋ ಅದನ್ನು ತಿಳಿಸುತ್ತೇನೆ ಕೇಳು,” ಎಂದು ಹೇಳಿ</verse>
				<verse number="15">ಪದ್ಯರೂಪವಾಗಿ ಹೀಗೆಂದನು: ಬೆಯೋರನ ಮಗ ಬಿಳಾಮನು ನುಡಿದ ಭವಿಷ್ಯವಾಣಿ:</verse>
				<verse number="16">ಮನೋದೃಷ್ಟಿಯಿಂದ ನೋಡುವ ಪುರುಷನ ವಾಣಿ ದೈವೋಕ್ತಿಗಳನ್ನು ಕೇಳುವವನ ಭವಿಷ್ಯವಾಣಿ ಪರಾತ್ಪರನ ಜ್ಞಾನವನ್ನು ಪಡೆದವನ ವಾಣಿ ಪರವಶನಾಗಿ ಕಣ್ದೆರೆದು ಸರ್ವಶಕ್ತನ ದರ್ಶನ ಹೊಂದಿದವನ ಭವಿಷ್ಯವಾಣಿ:</verse>
				<verse number="17">ಒಬ್ಬಾತನನ್ನು ನೋಡುತ್ತಿದ್ದೇನೆ; ಆತ ಈಗಿನವನಲ್ಲ. ಆತ ಕಾಣಿಸುತ್ತಾನೆ, ಆದರೆ ಸಮೀಪದಲ್ಲಿಲ್ಲ. ನಕ್ಷತ್ರಪ್ರಾಯನೊಬ್ಬನು ಉದಯಿಸಿದ್ದಾನೆ ಯಕೋಬವಂಶದಲ್ಲಿ ರಾಜದಂಡ ಹಿಡಿದವನು ಕಂಡು ಬಂದಿದ್ದಾನೆ ಇಸ್ರಯೇಲರಲ್ಲಿ. ಆತ ಸೀಳಿಹಾಕಿದ್ದಾನೆ ಮೋವಾಬ್ಯರ ತಲೆಯನ್ನು; ಕೆಡವಿಬಿಟ್ಟಿದ್ದಾನೆ ಯುದ್ಧವೀರರೆಲ್ಲರನ್ನು.</verse>
				<verse number="18">ಸ್ವಾಧೀನವಾಗಿಸಿಕೊಂಡಿದ್ದಾನೆ ಎದೋಮ್ಯರ ನಾಡನ್ನು; ಆತನಿಗೆ ಅಧೀನರಾದರು ಹಗೆಗಳಾದ ಸೇಯೀರಿನವರು.</verse>
				<verse number="19">ಹೌದು, ಇಸ್ರಯೇಲರು ಬಲವಂತರು ಯಕೋಬ್ಯರದೇ ದೊರೆತನವಾಯಿತು ನಗರಗಳಿಂದ ತಲೆತಪ್ಪಿಸಿಕೊಂಡವರೂ ನಾಶವಾದರು.”</verse>
				<verse number="20">ಅನಂತರ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಹೀಗೆಂದು ನುಡಿದನು: “ಅಮಾಲೇಕ್ಯರು ಶ್ರೇಷ್ಠರಲ್ಲವೆ ರಾಷ್ಟ್ರಗಳಲ್ಲಿ? ಆದರೂ ಅವರ ಗತಿ ವಿನಾಶವೇ ಸರಿ.”</verse>
				<verse number="21">ಬಳಿಕ ಕೇನ್ಯರನ್ನು ನೋಡಿ ಅವರ ವಿಷಯದಲ್ಲಿ ಇಂತೆಂದು ನುಡಿದನು: “ನಿಮ್ಮ ನಿವಾಸಸ್ಥಳ ಸುರಕ್ಷಿತ ಬೆಟ್ಟದ ತುತ್ತತುದಿಯಲ್ಲಿ ಗೂಡು ಕಟ್ಟಿಕೊಂಡಷ್ಟು ಸುರಕ್ಷಿತ</verse>
				<verse number="22">ಆದರೂ ಕೇನ್ಯರು ಕೂಡ ನಾಶವಾಗುವರು. ಅಶ್ಯೂರ್ಯರು ನಿಮ್ಮನ್ನು ಸೆರೆ ಹಿಡಿಯಲು ಎಷ್ಟು ಕಾಲ ತಾನೆ ಹಿಡಿಯುವುದು?”</verse>
				<verse number="23">ಬಿಳಾಮನು ಮುಂದುವರೆದು ನುಡಿದದ್ದು ಏನೆಂದರೆ: ಅಯ್ಯೋ, ದೇವರೇ ಹೀಗೆ ಮಾಡುವಾಗ ಉಳಿಯುವವರಾರು?</verse>
				<verse number="24">‘ಸೈಪ್ರಸ್’ ಎಂಬ ಸ್ಥಳದಿಂದ ಹಡಗುಗಳಲ್ಲಿ ಬರುವರು ಜನರು ಸೋಲಿಸುವರವರು ಅಶ್ಯೂರ್ಯರನ್ನೂ ಏಬೆರ್ ಜರನ್ನೂ; ಅವರಿಗೂ ನಾಶವುಂಟಾಗುವುದು.”</verse>
				<verse number="25">ಇದಾದ ಮೇಲೆ ಬಿಳಾಮನು ಸ್ವಂತ ನಾಡಿಗೆ ಹಿಂದಿರುಗಿದನು. ಬಾಲಾಕನು ತನ್ನ ದಾರಿ ಹಿಡಿದನು.</verse>
			</chapter>
			<chapter number="25">
				<verse number="1">ಇಸ್ರಯೇಲರು ಶಿಟ್ಟೀಮಿನಲ್ಲಿ ವಾಸಮಾಡುತ್ತಿದ್ದಾಗ ಮೋವಾಬ್ ಮಹಿಳೆಯರೊಡನೆ ಸಹವಾಸ ಮಾಡತೊಡಗಿದರು.</verse>
				<verse number="2">ಆ ಮಹಿಳೆಯರು ತಮ್ಮ ದೇವತೆಗಳಿಗೆ ಮಾಡಿದ ಬಲಿಔತಣಗಳಲ್ಲಿ ಭಾಗಿಗಳಾಗಲು ಇಸ್ರಯೇಲರನ್ನು ಆಹ್ವಾನಿಸುತ್ತಿದ್ದರು. ಇವರು ಪ್ರಸಾದ ಸ್ವೀಕರಿಸಿ ಆ ದೇವತೆಗಳಿಗೆ ತಲೆಬಾಗುತ್ತಿದ್ದರು.</verse>
				<verse number="3">ಹೀಗೆ ಇಸ್ರಯೇಲರು ಪೆಗೋರದ ‘ಬಾಳ್’ ದೇವತೆಯ ಭಕ್ತರಾದರು. ಇದರಿಂದ ಸರ್ವೇಶ್ವರ ಸ್ವಾಮಿ ಕೋಪಗೊಂಡರು.</verse>
				<verse number="4">ಮೋಶೆಗೆ, “ಈ ಜನರ ಮುಖಂಡರೆಲ್ಲರನ್ನು ಹಿಡಿಸಿ, ನನ್ನ ಆಜ್ಞಾನುಸಾರ ಬಹಿರಂಗವಾಗಿ ಮರಣದಂಡನೆಗೆ ಗುರಿಮಾಡಿಸು. ಆಗ ನನ್ನ ಕೋಪಾಗ್ನಿ ಇಸ್ರಯೇಲರಿಂದ ತೊಲಗುವುದು,” ಎಂದರು.</verse>
				<verse number="5">ಅಂತೆಯೇ ಮೋಶೆ ಇಸ್ರಯೇಲರ ನ್ಯಾಯಾಧಿಪತಿಗಳಿಗೆ, “ನಿಮ್ಮಲ್ಲಿ ಪ್ರತಿಯೊಬ್ಬನು ಪೆಗೋರದ ಬಾಳ್ ದೇವತೆಗೆ ಪೂಜಿಸುವ ತನ್ನ ತನ್ನ ವಂಶದವರಿಗೆ ಪ್ರಾಣಶಿಕ್ಷೆಯನ್ನು ವಿಧಿಸಬೇಕು,” ಎಂದು ಆಜ್ಞಾಪಿಸಿದನು.</verse>
				<verse number="6">ಇಸ್ರಯೇಲರ ಸರ್ವಸಮುದಾಯದವರು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ವಿಲಾಪಿಸುತ್ತಿದ್ದರು. ಇಸ್ರಯೇಲನಾದ ಒಬ್ಬ ವ್ಯಕ್ತಿ ಮೋಶೆಗೂ ಸರ್ವಸಮೂಹದವರಿಗೂ ಕಾಣುವಂತೆ ಒಬ್ಬ ಮಿದ್ಯಾನ್ ಮಹಿಳೆಯನ್ನು ತನ್ನ ಮನೆಯೊಳಗೆ ಕರೆದುಕೊಂಡು ಹೋದನು.</verse>
				<verse number="7">ಕೂಡಲೆ ಮಹಾಯಾಜಕ ಆರೋನನ ಮೊಮ್ಮಗನೂ ಹಾಗು ಎಲ್ಲಾಜಾರನ ಮಗನೂ ಆದ ಫೀನೆಹಾಸನು ಸಭೆಯ ನಡುವೆಯಿಂದೆದ್ದು ಈಟಿಯನ್ನು ಕೈಗೆ ತೆಗೆದುಕೊಂಡನು.</verse>
				<verse number="8">ಆ ಇಸ್ರಯೇಲ ವ್ಯಕ್ತಿಯ ಹಿಂದೆಯೇ ಹೋಗಿ, ಅವನ ಒಳಕೋಣೆಯನ್ನು ಹೊಕ್ಕು ಅವರಿಬ್ಬರನ್ನು, ಅಂದರೆ ಆ ಇಸ್ರಯೇಲನನ್ನು ಮತ್ತು ಆ ಮಹಿಳೆಯನ್ನು ಒಂದೇ ಬಾರಿಗೆ ಹೊಟ್ಟೆಯಲ್ಲಿ ತಿವಿದುಕೊಂದನು. ಹೀಗೆ ಇಸ್ರಯೇಲರಿಗೆ ಒದಗಿದ್ದ ಜಾಡ್ಯ ನಿಂತುಹೋಯಿತು.</verse>
				<verse number="9">ಇಪ್ಪತ್ತನಾಲ್ಕು ಸಾವಿರ ಮಂದಿ ಈಗಾಗಲೇ ಈ ಜಾಡ್ಯದಿಂದ ಸತ್ತಿದ್ದರು.</verse>
				<verse number="10">ಸರ್ವೇಶ್ವರ ಮೋಶೆಗೆ ಹೀಗೆಂದರು:</verse>
				<verse number="11">“ಮಹಾಯಾಜಕ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಇಸ್ರಯೇಲರ ಮೇಲೆ ನನಗಿದ್ದ ಕೋಪವನ್ನು ತೊಲಗಿಸಿದ್ದಾನೆ. ನನ್ನ ಬಗ್ಗೆ ಅವನೊಬ್ಬನೆ ಅಭಿಮಾನವನ್ನು ವ್ಯಕ್ತಪಡಿಸಿದ್ದಾನೆ. ನನ್ನ ಗೌರವವನ್ನು ಕಾಪಾಡಿಕೊಳ್ಳಲು ಇನ್ನು ಇಸ್ರಯೇಲರನ್ನು ನಿರ್ಮೂಲ ಮಾಡಬೇಕಾದ ಅಗತ್ಯವಿಲ್ಲ.</verse>
				<verse number="12">ಆದಕಾರಣ ನಾನು ಅವನ ಸಂಗಡ ಸಮಾಧಾನದ ಒಪ್ಪಂದವನ್ನು ಮಾಡಿಕೊಳ್ಳುತ್ತೇನೆಂದು ತಿಳಿಸು.</verse>
				<verse number="13">ಆ ಒಪ್ಪಂದವೇನೆಂದರೆ ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವುದೆಂದು ವಾಗ್ದಾನ ಮಾಡುತ್ತೇನೆ. ಅವನು ತನ್ನ ದೇವರ ಗೌರವದ ಬಗ್ಗೆ ಅಭಿಮಾನ ವ್ಯಕ್ತಪಡಿಸಿದ್ದಾನೆ; ಇಸ್ರಯೇಲರ ದೋಷಕ್ಕಾಗಿ ಪ್ರಾಯಶ್ಚಿತ್ತ ಮಾಡಿದ್ದಾನೆ. ಆದ್ದರಿಂದ ಅವನಿಗೇ ಈ ವಾಗ್ದಾನ ಮಾಡಿದ್ದೇನೆ.”</verse>
				<verse number="14">ಆ ಮಿದ್ಯಾನ್ ಮಹಿಳೆಯೊಡನೆ ಹತನಾದವನ ಹೆಸರು ಜಿಮ್ರೀ. ಅವನು ಸಿಮೆಯೋನ್ ಕುಲದವರಲ್ಲಿ ಗೋತ್ರ ನಾಯಕನಾದ ಸಾಲೂ ಎಂಬವನ ಮಗ.</verse>
				<verse number="15">ಹತಳಾದ ಮಿದ್ಯಾನ್ ಮಹಿಳೆಯ ಹೆಸರು ಕೊಜ್ಜೀ. ಅವಳು ಮಿದ್ಯಾನ್ಯರಲ್ಲಿ ಗೋತ್ರನಾಯಕನಾದ ಚೂರ್ ಎಂಬವನ ಮಗಳು.</verse>
				<verse number="16">ಅನಂತರ ಸರ್ವೇಶ್ವರ ಮೋಶೆಗೆ:</verse>
				<verse number="17">“ನೀನು ದಾಳಿಮಾಡಿ ಮಿದ್ಯಾನ್ಯರನ್ನು ಹಾಳುಮಾಡು.</verse>
				<verse number="18">ಅವರು ಪೆಗೋರದಲ್ಲಿ ನಡೆದ ಘಟನೆಗಳಲ್ಲೂ ತಮ್ಮ ನಾಯಕನ ಮಗಳಾದ ಕೊಜ್ಜೀ ಎಂಬ ಸ್ವಕುಲಸ್ತ್ರೀಯ ವಿಷಯದಲ್ಲೂ ನಿಮ್ಮನ್ನು ಮೋಸಗೊಳಿಸಿದ್ದಾರೆ. ನಿಮಗೆ ಕೇಡುಮಾಡಿದ್ದಾರೆ,” ಎಂದರು. ಆ ಮಹಿಳೆ ಹತಳಾದುದು ಪೆಗೋರದ ಘಟನೆಗಳ ನಿಮಿತ್ತ ದೊಡ್ಡ ರೋಗ ಬಂದಾಗ.</verse>
			</chapter>
			<chapter number="26">
				<verse number="1">ಆ ದೊಡ್ಡರೋಗ ನಿಂತ ಮೇಲೆ ಸರ್ವೇಶ್ವರ ಸ್ವಾಮಿ ಮೋಶೆಗೆ ಮತ್ತು ಆರೋನನ ಮಗ ಎಲ್ಲಾಜಾರನಿಗೆ:</verse>
				<verse number="2">“ನೀವು ಇಸ್ರಯೇಲ ಸಮಾಜದವರಲ್ಲಿ ಇಪ್ಪತ್ತು ವರ್ಷ ಮತ್ತು ಮೇಲ್ಪಟ್ಟ ವಯಸ್ಸುಳ್ಳವರನ್ನು ಅಂದರೆ ಸೈನಿಕಸೇವೆಗೆ ಅರ್ಹರಾದವರನ್ನು ಗೋತ್ರ ಗೋತ್ರಗಳ ಪ್ರಕಾರ ಜನಗಣತಿ ಮಾಡಿ,” ಎಂದು ಹೇಳಿದರು.</verse>
				<verse number="3">ಅಂತೆಯೇ ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರನು ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ಪಟ್ಟಣದ ಹತ್ತಿರ ಮೋವಾಬ್ಯರ ಮೈದಾನದಲ್ಲಿ ಜನಗಣತಿ ಮಾಡಿದರು.</verse>
				<verse number="4">ಸರ್ವೇಶ್ವರ ಮೋಶೆಗೂ ಈಜಿಪ್ಟಿನಿಂದ ಬಂದಿದ್ದ ಇಸ್ರಯೇಲರಿಗೂ ಆಜ್ಞಾಪಿಸಿದ್ದಂತೆ ಇಪ್ಪತ್ತು ವರ್ಷ ಮತ್ತು ಮೇಲ್ಪಟ್ಟ ವಯಸ್ಸಿನ ಇಸ್ರಯೇಲರನ್ನು ಲೆಕ್ಕಿಸಿದರು: ಅದರ ವಿವರ ಇದು.</verse>
				<verse number="5">ಯಕೋಬನ ಜೇಷ್ಠ ಪುತ್ರನಾದ ರೂಬೇನನ ವಂಶಸ್ಥರು ಇವರು: ಹನೋಕನಿಂದ ಹನೋಕ್ಯರು, ಪಲ್ಲೂವಿನಿಂದ ಪಲ್ಲೂವಿನವರು,</verse>
				<verse number="6">ಹೆಚ್ರೋನನಿಂದ ಹೆಚ್ರೋನ್ಯರು ಹಾಗು ಕರ್ಮೀಯನಿಂದ ಕರ್ಮೀಯರು.</verse>
				<verse number="7">ರುಬೇನ್ಯರಾದ ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ 43,730:</verse>
				<verse number="8">ಪಲ್ಲೂವಿನ ಮಗ ಎಲೀಯಾಬ್;</verse>
				<verse number="9">ಎಲೀಯಾಬನ ಮಕ್ಕಳು ಇವರು - ನೆಮೂವೇಲ್, ದಾತಾನ್ ಮತ್ತು ಅಬೀರಾಮ್, ಕೋರಹನ ಪಂಗಡದವರು ಸರ್ವೇಶ್ವರನಿಗೆ ವಿರುದ್ಧ ವಾದಿಸಿದ ಕಾಲದಲ್ಲಿ ಅವರೊಂದಿಗೆ ಸೇರಿಕೊಂಡು ಮೋಶೆ ಮತ್ತು ಆರೋನರಿಗೆ ವಿರುದ್ಧ ಪ್ರತಿಭಟಿಸಿದ ಆಲೋಚನಾಕರ್ತರು ದಾತಾನ್ ಮತ್ತು ಅಬೀರಾಮ್.</verse>
				<verse number="10">ಇವರನ್ನು ಹಾಗು ಕೋರಹನನ್ನು ಭೂಮಿ ಬಾಯ್ದೆರೆದು ನುಂಗಿಬಿಟ್ಟಿತು. ಆ ಪಂಗಡದವರಲ್ಲಿ ಬೇರೆ ಇನ್ನೂರೈವತ್ತು ಮಂದಿಯನ್ನು ಬೆಂಕಿ ಸುಟ್ಟು ಹಾಕಿತು. ಹೀಗೆ ಇಸ್ರಯೇಲರಿಗೆ ಎಚ್ಚರಿಕೆ ಉಂಟಾಗುವಂತೆ ಮಾಡಿತು.</verse>
				<verse number="11">ಆ ಪಂಗಡದವರೆಲ್ಲರು ಸತ್ತರು. ಆದರೆ ಕೋರಹನ ಮಕ್ಕಳು ಆ ಕಾಲದಲ್ಲಿ ಸಾಯಲಿಲ್ಲ.</verse>
				<verse number="12">ಸಿಮೆಯೋನ್ ಕುಲದ ಕುಟುಂಬಗಳು ಇವು: ನೆಮೂವೇಲನಿ0ದ ನೆಮೂವೇಲ್ಯರು, ಯಾಮೀನನಿ೦ದ ಯಾಮೀನ್ಯರು, ಯಾಕೀನನಿ0ದ ಯಾಕೀನ್ಯರು,</verse>
				<verse number="13">ಜೆರಹನಿಂದ ಜೆರಹಿಯರು, ಸೌಲನಿಂದ ಸೌಲ್ಯರು ಎ0ಬ ವ0ಶಸ್ಥರು.</verse>
				<verse number="14">ಸಿಮೆಯೋನ್ ಕುಲದವರಾದ ಇವರಲ್ಲಿ ಲೆಕ್ಕಿತರಾದವರ ಸ೦ಖ್ಯೆ: 22,200:</verse>
				<verse number="15">ಗಾದ್ ಕುಲದ ಕುಟು೦ಬಗಳು ಇವು: ಚೆಫೋನನಿ೦ದ ಚೆಫೋನ್ಯರು, ಹಗ್ಗೀಯನಿ೦ದ ಹಗ್ಗೀಯರು, ಶೂನೀಯನಿ೦ದ‍ ‍ಶೂನೀಯರು,</verse>
				<verse number="16">ಒಜ್ನೀಯನಿ೦ದ ಒಜ್ನೀಯರು, ಏರೀಯನಿ೦ದ ಏರೀಯರು,</verse>
				<verse number="17">ಆರೋದನಿ೦ದ ಆರೋದ್ಯರು, ಅರೇಲೀಯನಿ೦ದ ಅರೇಲಿಯರು ಎ೦ಬ ವ೦ಶಸ್ಥರು.</verse>
				<verse number="18">ಗಾದ್ ಕುಲದವರಾದ ಇವರಲ್ಲಿ ಲೆಕ್ಕಿತರಾದವರ ಸ೦ಖ್ಯೆ: 40,500:</verse>
				<verse number="19">ಯೆಹೂದನ ಮಕ್ಕಳಲ್ಲಿ ಏರ್, ಓನಾನ್ಯರು ಕಾನಾನ ನಾಡಿನಲ್ಲಿ ಸತ್ತರು.</verse>
				<verse number="20">ಯೆಹೂದ ಕುಲದಲ್ಲಿ ಉಳಿದ ಕುಟು೦ಬಗಳು ಇವು - ಶೆಲಹನಿ೦ದ ಶೇಲಾನ್ಯರು, ಪೆರೆಚನಿ೦ದ ಪೆರೆಚ್ಯರು, ಹಾಗು ಜೆರಹನಿ೦ದ ಜೆರಹಿಯರು.</verse>
				<verse number="21">ಪೆರಚನಿ೦ದ ಬೆಳೆದ ಕುಟು೦ಬಗಳು - ಹೆಚ್ರೋನನಿ೦ದ ಹೆಚ್ರೋನ್ಯರು ಮತ್ತು ಹಾಮೂಲನಿ೦ದ ಹಾಮೂಲ್ಯರು ಎ೦ಬ ವ೦ಶಸ್ಥರು.</verse>
				<verse number="22">ಯೆಹೂದ ಕುಲದವರಾದ ಇವರಲ್ಲಿ ಲೆಕ್ಕಿತರಾದವರ ಸ೦ಖ್ಯೆ: 76,500:</verse>
				<verse number="23">ಇಸ್ಸಾಕಾರ್ ಕುಲದ ಕುಟುಂಬಗಳು ಯಾವುವೆಂದರೆ - ತೋಲನಿಂದ ತೋಲಾಯರು, ಪುವ್ವನಿಂದ ಪೂನ್ಯರು,</verse>
				<verse number="24">ಯಾಶೂಬನಿಮದ ಯಶೂಬ್ಯರು ಮತ್ತು ಶಿಮ್ರೋನನಿಂದ ಶಿಮ್ರೋನ್ಯರು ಎಂಬ ವಂಶಸ್ಥರು.</verse>
				<verse number="25">ಇಸ್ಸಾಕಾರ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರ ಸಂಖ್ಯೆ: 64,300:</verse>
				<verse number="26">ಜೆಬುಲೂನ್ ಕುಲದ ಕುಟುಂಬಗಳು ಇವು - ಸೆರೆದನಿಂದ ಸೆರೆದ್ಯರು, ಏಲೋನನಿಂದ ಏಲೋನ್ಯರು ಮತ್ತು ಯಹಲೇಲನಿಂದ ಯಹಲೇಲ್ಯರು.</verse>
				<verse number="27">ಜೆಬುಲೂನ್ ಕುಲದವರಾದ ಇವರಲ್ಲಿ ಲೆಕ್ಕಿಸಲ್ಪಟ್ಟವರ ಸಂಖ್ಯೆ: 60,500:</verse>
				<verse number="28">ಜೋಸೆಫನ ಮಕ್ಕಳು ಮನಸ್ಸೆ ಮತ್ತು ಎಫ್ರಾಯಿಮ್.</verse>
				<verse number="29">ಮನಸ್ಸೆ ಕುಲದ ಕುಟುಂಬಗಳು ಯಾವುವೆಂದರೆ - ಮಾಕೀರನಿಂದ ಮಾಕೀರ್ಯರು ಮತ್ತು ಮಾಕೀರನ ಮಗ ಗಿಲ್ಯಾದನಿಂದ ಗಿಲ್ಯಾದ್ಯರು ಎಂಬ ವಂಶಸ್ಥರು.</verse>
				<verse number="30">ಗಿಲ್ಯಾದನ ವಂಶದವರು ಇವರು: ಈಯೆಜೆರನಿಂದ ಈಯೆಜೆರ್ಯರು, ಹೇಲಿಕನಿಂದ ಹೇಲಿಕ್ಯರು,</verse>
				<verse number="31">ಅಸ್ರೀಯೇಲನಿಂದ ಅಸ್ರೀಯೇಲ್ಯರು, ಶೆಕೆಮನಿಂದ ಶೆಕೆಮ್ಯರು,</verse>
				<verse number="32">ಶೆಮೀದಾಯನಿಂದ ಶೆಮೀದಾಯರು ಮತ್ತು ಹೇಫೆರನಿಂದ ಹೇಫೆರ್ಯರು ಎಂಬ ವಂಶಸ್ಥರು.</verse>
				<verse number="33">ಹೇಫೆಕನ ಮಗ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡು ಮಕ್ಕಳು ಹುಟ್ಟಲಿಲ್ಲ. ಅವನ ಹೆಣ್ಣು ಮಕ್ಕಳ ಹೆಸರು ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ.</verse>
				<verse number="34">ಮನಸ್ಸೆ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಸಂಖ್ಯೆ: 52,700:</verse>
				<verse number="35">ಎಫ್ರಯಿಮ್ ಕುಲದ ಕುಟುಂಬಗಳು ಇವು - ಶೂತೆಲಹನಿಂದ ಶೂತೆಲಹ್ಯರು, ಬೆಕೆರನಿಂದ ಬೆಕೆರ್ಯರು, ತಹನನಿಂದ ತಹನಿಯರು.</verse>
				<verse number="36">ಶೂತೆಲಹನ ಮಗ ಏರಾನನಿಂದ ಏರಾನ್ಯರು ಎಂಬ ವಂಶಸ್ಥರು. ಎಫ್ರಯಿಮ್ ಕುಲದವರಾದ</verse>
				<verse number="37">ಇವರಲ್ಲಿ ಲೆಕ್ಕಿಸಲ್ಪಟ್ಟವರ ಸಂಖ್ಯೆ: 32,500: ಇದೇ ಜೋಸೆಫ್ ವಂಶದ ಕುಟುಂಬಗಳ ವಿವರ.</verse>
				<verse number="38">ಬೆನ್ಯಾಮೀನ್ ಕುಲದ ಕುಟುಂಬಗಳ ಹೆಸರು ಹೀಗಿದೆ - ಬೆಲಗನಿಂದ ಬೆಲಗ್ಯರು,ಅಷ್ಬೇಲನಿಂದ ಅಷ್ಬೇಲ್ಯರು, ಅಹೀರಾಮನಿಂದ ಅಹೀರಾಮ್ಯರು,</verse>
				<verse number="39">ಶೂಫಾಮನಿಂದ ಶೂಫಾಮ್ಯರು, ಹೂಫಾಮನಿಂದ ಹೂಫಾಮ್ಯರು ಎಂಬ ವಂಶಸ್ಥರು.</verse>
				<verse number="40">ಬೆಲಗನಿಗೆ ಅರ್ದ್ ಮತ್ತು ನಾಮಾನ್ ಎಂಬ ಇಬ್ಬರು ಮಕ್ಕಳಿದ್ದರು. ಅರ್ದನಿಂದ ಅರ್ದ್ಯರು ಮತ್ತು ನಾಮಾನನಿಂದ ನಾಮಾನ್ಯರು ಎಂಬ ವಂಶಸ್ಥರಾದರು.</verse>
				<verse number="41">ಬೆನ್ಯಾಮೀನ್ ಕುಲದವರಾದ ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ: 45,600:</verse>
				<verse number="42">ದಾನ್ ಕುಲದ ಕುಟುಂಬಗಳು ಇವು: ಶೂಹಾಮನಿಂದ ಶೂಹಾಮ್ಯರು ಎಂಬ ವಂಶಸ್ಥರು.</verse>
				<verse number="43">ದಾನ್ ಕುಲದವರಲ್ಲಿ ಲೆಕ್ಕಿತರಾದವರ ಸಂಖ್ಯೆ: 64,400:</verse>
				<verse number="44">ಅಶೇರ್ ಕುಲದ ಕುಟುಂಬಗಳ ಹೆಸರು ಇವು: ಇಮ್ಮಾಹನಿಂದ ಇಮ್ಮಾಹ್ಯರು, ಇಷ್ವೀಯನಿಂದ ಇಷ್ವೀಯರು ಮತ್ತು ಬೆರೀಯನಿಂದ ಬೆರೀಯ ವಂಶಸ್ಥರು.</verse>
				<verse number="45">ಬೆರೀಯನ ಮಕ್ಕಳಿಂದ ಉಂಟಾದ ಕುಟುಂಬಗಳು ಇವು - ಹೇಬೆರನಿಂದ ಹೇಬೆರ್ಯರು ಮತ್ತು ಮಲ್ಕಿಯೇಲನಿಂದ ಮಲ್ಕಿಯೇಲ್ಯರು.</verse>
				<verse number="46">ಆಶೇರನಿಗೆ ಸೆರಹಳೆಂಬ ಮಗಳು ಸಹ ಇದ್ದಳು.</verse>
				<verse number="47">ಆಶೇರ್ ಕುಲದವರಾದ ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ: 53,400:</verse>
				<verse number="48">ನಫ್ತಾಲಿ ಕುಲದ ಕುಟುಂಬಗಳು ಯಾವುವೆಂದರೆ - ಯಹಚೇಲನಿಂದ ಯಹಚೇಲ್ಯರು, ಗೂನೀಯನಿಂದ ಗೂನೀಯರು,</verse>
				<verse number="49">ಯೇಚೆರನಿಂದ ಯೇಚೆರ್ಯರು ಮತ್ತು ಶಿಲ್ಲೇಮನಿಂದ ಶಿಲ್ಲೇಮ್ಯರು,</verse>
				<verse number="50">ನಫ್ತಾಲಿ ಕುಲದವರಾದ ಇವರಲ್ಲಿ ಲೆಕ್ಕಿತರಾದವರ ಸಂಖ್ಯೆ: 45,400:</verse>
				<verse number="51">ಇಸ್ರಯೇಲರಲ್ಲಿ ಲೆಕ್ಕಿತರಾದವರ ಒಟ್ಟು ಸಂಖ್ಯೆ; 601,730:</verse>
				<verse number="52">ಸರ್ವೇಶ್ವರ ಸ್ವಾಮಿ ಮೋಶೆಗೆ,</verse>
				<verse number="53">“ಈ ಕುಲಗಳಿಗೆ ಅವರವರ ಸಂಖ್ಯೆಯ ಪ್ರಕಾರ ಆ ನಾಡನ್ನು ಸ್ವಂತ ನಾಡಾಗಿ ಹಂಚಿಕೊಡು.</verse>
				<verse number="54">ಹೆಚ್ಚುಮಂದಿಯುಳ್ಳ ಕುಲಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಲಕ್ಕೆ ಕಡಿಮೆಯಾಗಿಯೂ ಕೊಡು. ಲೆಕ್ಕಿಸಿದ ಸಂಖ್ಯೆಯ ಪ್ರಕಾರವೇ ಪ್ರತಿ ಒಂದು ಕುಲಕ್ಕೆ ಭೂಮಿಯನ್ನು ಸೊತ್ತಾಗಿ ಕೊಡು.</verse>
				<verse number="55">ಪ್ರತಿಯೊಂದು ಕುಲದ ಮೂಲಪುರುಷನ ಹೆಸರನ್ನು ಬರೆದು ಚೀಟು ಹಾಕಿ ಆಯಾ ಕುಲಕ್ಕೆ ಸೊತ್ತನ್ನು ಗೊತ್ತುಮಾಡು.</verse>
				<verse number="56">ಹೆಚ್ಚು ಮಂದಿಯುಳ್ಳ ಕುಲಕ್ಕಾಗಲಿ, ಕಡಿಮೆ ಮಂದಿಯುಳ್ಳ ಕುಲಕ್ಕಾಗಲಿ ಚೀಟು ಬಂದ ಪ್ರಕಾರವೇ ಸೊತ್ತನ್ನು ಗೊತ್ತುಮಾಡು.</verse>
				<verse number="57">ಲೇವಿಯರಲ್ಲಿ ಎಣಿಕೆಯಾದ ಕುಟುಂಬಗಳು ಇವು: ಗೇರ್ಷೋನನಿಂದ ಗೇರ್ಷೋನ್ಯರು, ಕೆಹಾತನಿಂದ ಕೆಹಾತ್ಯರು ಮತ್ತು ಮೆರಾರೀಯನಿಂದ ಮೆರಾರೀಯರು, ಎಂಬ ವಂಶಸ್ಥರು.</verse>
				<verse number="58">ಲೇವಿ ಕುಲದವರ ಕುಟುಂಬಗಳು ಯಾವುವೆಂದರೆ - ಲಿಬ್ನೀ, ಹೆಬ್ರೋನ್, ಮಹ್ಲೀಯ, ಮೂಷೀಯ ಮತ್ತು ಕೋರಹಿಯ ಎಂಬ ಕುಟುಂಬಗಳು.</verse>
				<verse number="59">ಕೆಹಾತನು ಅಮ್ರಾಮನನ್ನು ಪಡೆದನು. ಅಮ್ರಾಮನ ಹೆಂಡತಿ ಈಜಿಪ್ಟ್ ದೇಶದಲ್ಲಿ ಲೇವಿಯಿಂದ ಹುಟ್ಟಿದ ಯೋಕೆಬೆದ ಎಂಬವಳು. ಈಕೆಯಲ್ಲಿ ಅಮ್ರಾಮನಿಂದ ಆರೋನ, ಮೋಶೆ ಮತ್ತು ಅಕ್ಕ ಮಿರ್ಯಾಮಳೂ ಹುಟ್ಟಿದರು.</verse>
				<verse number="60">ಆರೋನನಿಂದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬವರು ಹುಟ್ಟಿದರು.</verse>
				<verse number="61">ನಾದಾಬ್ ಮತ್ತು ಅಬೀಹೂ ಎಂಬ ಇಬ್ಬರು ಸರ್ವೇಶ್ವರನ ಸನ್ನಿಧಿಯಲ್ಲಿ ಬಹಿಷ್ಕೃತ ಅಗ್ನಿಯಿಂದ ಧೂಪಾರತಿ ಎತ್ತಿದುದರಿಂದ ಸತ್ತುಹೋದರು.</verse>
				<verse number="62">ಬೇರೆ ಇಸ್ರಯೇಲರಿಗೆ ಸೊತ್ತು ದೊರಕಿದಂತೆ ಲೇವಿಯರಿಗೆ ದೊರಕದೆ ಹೋದುದರಿಂದ ಅವರು ಇಸ್ರಯೇಲರ ಸಮೇತ ಎಣಿಕೆ ಆಗಲಿಲ್ಲ. ಲೇವಿಯರಲ್ಲಿ ಒಂದು ತಿಂಗಳು ಮತ್ತು ಮೇಲ್ಪಟ್ಟ ವಯಸ್ಸಿನ ಗಂಡಸರನ್ನು ಲೆಕ್ಕ ಹಾಕಿದಾಗ ಅವರ ಸಂಖ್ಯೆ: 23,000 ಇತ್ತು.</verse>
				<verse number="63">ಜೋರ್ಡನ್ ನದಿ ತೀರದಲ್ಲಿ, ಜೆರಿಕೋ ಪಟ್ಟಣದ ಹತ್ತಿರವಿದ್ದ ಮೋವಾಬ್ಯರ ಮೈದಾನದಲ್ಲಿ ಮೋಶೆ ಮತ್ತು ಯಾಜಕ ಎಲ್ಲಾಜಾರನು ಇಸ್ರಯೇಲರ ಜನಗಣತಿ ಮಾಡಿದಾಗ ಇದ್ದ ಜನಸಂಖ್ಯೆ ಇದು.</verse>
				<verse number="64">ಮೋಶೆ ಮತ್ತು ಯಾಜಕ ಆರೋನನು ಸೀನಾಯಿ ಮರುಭೂಮಿಯಲ್ಲಿ ಇಸ್ರಯೇಲರ ಜನಗಣತಿ ಮಾಡಿದಾಗ ಎಣಿಕೆಯಾದವರಲ್ಲಿ ಒಬ್ಬರಾದರೂ ಇವರಲ್ಲಿರಲಿಲ್ಲ.</verse>
				<verse number="65">ಏಕೆಂದರೆ ನಿಶ್ಚಯವಾಗಿ ಅವರು ಮರುಭೂಮಿಯಲ್ಲೇ ಸಾಯುವರೆಂದು ಸರ್ವೇಶ್ವರ ಸ್ವಾಮಿ ಹೇಳಿದ್ದರು. ಆದ್ದರಿಂದ ಯೆಫುನ್ನೆಯ ಮಗ ಕಾಲೇಬ್ ಮತ್ತು ನೂನನ ಮಗ ಯೆಹೋಶುವ ಇವರಿಬ್ಬರನ್ನು ಬಿಟ್ಟರೆ ಅವರಲ್ಲಿ ಯಾರೂ ಉಳಿಯಲಿಲ್ಲ.</verse>
			</chapter>
			<chapter number="27">
				<verse number="1">ಜೋಸೆಫನ ಕುಮಾರ ಮನಸ್ಸೆಯ ವಂಶಕ್ಕೆ ಸೇರಿದವನು ಚಲ್ಪಹಾದ ಎಂಬವನು. ಇವನು ಮಾಕೀರನ ಮರಿಮಗ, ಗಿಲ್ಯಾದನ ಮೊಮ್ಮಗ ಹಾಗು ಹೇಫರನ ಮಗ. ಈ ಚಲ್ಪಹಾದನಿಗೆ ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ ಮತ್ತು ತಿರ್ಚಾ ಎಂಬ ಹೆಣ್ಣು ಮಕ್ಕಳಿದ್ದರು.</verse>
				<verse number="2">ಇವರು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಿದ್ದ ಮೋಶೆ, ಮಹಾಯಾಜಕ ಎಲ್ಲಾಜಾರ್, ಕುಲಾಧಿಪತಿಗಳು ಹಾಗು ಸರ್ವಸಮೂಹದವರ ಮುಂದೆ ಬಂದು ತಮ್ಮ ಒಂದು ವಿಜ್ಞಾಪನೆಯನ್ನು ಮುಂದಿಟ್ಟರು:</verse>
				<verse number="3">“ನಮ್ಮ ತಂದೆ ಮರುಭೂಮಿಯಲ್ಲಿ ಸತ್ತುಹೋದರು. ಅವರು ಕೋರಹನ ಜತೆ ಸೇರಿ ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದವರಲ್ಲ. ಅವರು ಸತ್ತದ್ದು ತಮ್ಮ ಸ್ವಂತ ಪಾಪದ ನಿಮಿತ್ತ. ಅವರಿಗೆ ಗಂಡುಮಕ್ಕಳಿರಲಿಲ್ಲ.</verse>
				<verse number="4">ನಮ್ಮ ತಂದೆಗೆ ಗಂಡುಮಗನಿಲ್ಲದ ಮಾತ್ರಕ್ಕೆ ಅವರ ಹೆಸರನ್ನು ಕುಲದಿಂದ ತೆಗೆದುಹಾಕುವುದು ನ್ಯಾಯವೇ? ನಮ್ಮ ತಂದೆಯ ಸ್ವಂತದವರಲ್ಲಿ ನಮಗೂ ಸೊತ್ತನ್ನು ಕೊಡಿ,” ಎಂದು ಕೇಳಿಕೊಂಡರು.</verse>
				<verse number="5">ಮೋಶೆ ಅವರ ವಿಜ್ಞಾಪನೆಯನ್ನು ಸರ್ವೇಶ್ವರನ ಸಮ್ಮುಖದಲ್ಲಿ ವಿಚಾರಿಸಿದನು. ಅವರು ಆತನಿಗೆ ಹೀಗೆಂದು ವಿಧಿಸಿದರು:</verse>
				<verse number="6">“ಚಲ್ಪಹಾದನ ಹೆಣ್ಣುಮಕ್ಕಳು ಹೇಳುವುದು ನ್ಯಾಯವಾಗಿದೆ.</verse>
				<verse number="7">ಅವರ ತಂದೆಯ ಸ್ವಂತದವರಲ್ಲಿ ಅವರಿಗೂ ಸೊತ್ತನ್ನು ಕೊಡು. ತಂದೆಯ ಸೊತ್ತು ಅವರಿಗೆ ಸೇರಲಿ.</verse>
				<verse number="8">ಇದಲ್ಲದೆ ಇಸ್ರಯೇಲರಿಗೆ ನೀನು ಹೀಗೆಂದು ಆಜ್ಞಾಪಿಸು: ಯಾವನಾದರು ಮಗನಿಲ್ಲದೆ ಸತ್ತರೆ ಅವನ ಸೊತ್ತು ಅವನ ಮಗಳಿಗೆ ಸೇರಬೇಕು.</verse>
				<verse number="9">ಮಗಳು ಇಲ್ಲದ ಪಕ್ಷಕ್ಕೆ ಅವನ ಸೊತ್ತು ಅವನ ಅಣ್ಣತಮ್ಮಂದಿರಿಗೆ ಸೇರಬೇಕು.</verse>
				<verse number="10">ಅಣ್ಣತಮ್ಮಂದಿರಿಲ್ಲದ ಪಕ್ಷಕ್ಕೆ ತಂದೆಯ ಅಣ್ಣತಮ್ಮಂದಿರಿಗೆ ಸೇರಬೇಕು.</verse>
				<verse number="11">ಇವರೂ ಇಲ್ಲದಿದ್ದರೆ ಕುಲದವರಲ್ಲಿ ಸಮೀಪ ಬಂಧುವಿಗೆ ಸೇರಬೇಕು; ಇವನೇ ಅದನ್ನು ಅನುಭೋಗಿಸಲಿ. ಸರ್ವೇಶ್ವರನಾದ ನಾನು ನಿನಗೆ ಅಪ್ಪಣೆಮಾಡಿದ ಈ ತೀರ್ಮಾನವು ಇಸ್ರಯೇಲರಿಗೆ ನ್ಯಾಯವಿಧಿಯಾಗಿರಲಿ.”</verse>
				<verse number="12">ಸರ್ವೇಶ್ವರ ಮೋಶೆಗೆ ಹೀಗೆಂದರು: “ನೀನು ಈ ಅಬಾರೀಮ್ ಬೆಟ್ಟವನ್ನು ಹತ್ತಿ ಇಸ್ರಯೇಲರಿಗೆ ನಾನು ವಾಗ್ದಾನ ಮಾಡಿದ ನಾಡನ್ನು ನೋಡು.</verse>
				<verse number="13">ನೋಡಿದ ಮೇಲೆ ನಿನ್ನ ಅಣ್ಣ ಆರೋನನು ಮರಣಹೊಂದಿ ಪಿತೃಗಳ ಬಳಿಗೆ ಸೇರಿದಂತೆ ನೀನು ಕೂಡ ಸೇರಬೇಕು.</verse>
				<verse number="14">ಚಿನ್ ಮರುಭೂಮಿಯಲ್ಲಿ ಇಸ್ರಯೇಲ್ ಸಮಾಜದವರು ನನ್ನೊಡನೆ ವಿವಾದಿಸಿದರು. ಆಗ ನೀವಿಬ್ಬರೂ ನನ್ನ ಗೌರವವನ್ನು ಅವರ ಮುಂದೆ ಕಾಪಾಡದೆಹೋದಿರಿ; ನನ್ನ ಆಜ್ಞೆಯನ್ನು ಉಲ್ಲಂಘಿಸಿದಿರಿ. ಆದ್ದರಿಂದ ನೀವು ಆ ನಾಡನ್ನು ಸೇರಬಾರದು.” ಚಿನ್ ಮರುಭೂಮಿಯಲ್ಲಿನ ಕಾದೇಶಿನಲ್ಲಿರುವ ಮೆರಿಬಾ ಜಲಾಶಯದ ಬಳಿ ನಡೆದ ಘಟನೆಯನ್ನು ಸೂಚಿಸುತ್ತಾ ಇದನ್ನು ನುಡಿದರು.</verse>
				<verse number="15">ಆಗ ಮೋಶೆ ಸರ್ವೇಶ್ವರನಿಗೆ:</verse>
				<verse number="16">“ಸರ್ವೇಶ್ವರಾ, ಎಲ್ಲ ಪ್ರಾಣಿಗಳಿಗೆ ಜೀವದಾತ ದೇವರೇ, ನಿಮ್ಮವರಾದ ಈ ಸಮಾಜದವರು ಕುರುಬನಿಲ್ಲದ ಕುರಿಗಳಾಗಬಾರದು.</verse>
				<verse number="17">ಆದುದರಿಂದ ಅವರ ಕೆಲಸಕಾರ್ಯಗಳನ್ನು ನಿರ್ವಹಿಸುವುದಕ್ಕೂ ಅವರನ್ನು ಮುನ್ನಡೆಸುವುದಕ್ಕೂ ಹಿಂದಕ್ಕೆ ಕರೆದುತರುವುದಕ್ಕೂ ಒಬ್ಬ ನಾಯಕನನ್ನು ನೇಮಿಸಿ,” ಎಂದು ಮನವಿಮಾಡಿಕೊಂಡನು.</verse>
				<verse number="18">ಅದಕ್ಕೆ ಸರ್ವೇಶ್ವರ, “ನೂನನ ಮಗ ಯೆಹೋಶುವನು ಆತ್ಮವರ ಸಂಪನ್ನನು.</verse>
				<verse number="19">ಅವನನ್ನು ಮಹಾಯಾಜಕನಾದ ಎಲ್ಲಾಜಾರನ ಮುಂದೆ ಹಾಗು ಸಮಾಜದವರೆಲ್ಲರ ಮುಂದೆ ನಿಲ್ಲಿಸು; ಅವನ ಮೇಲೆ ಹಸ್ತನಿಕ್ಷೇಪಮಾಡಿ ಅವರ ಸಮ್ಮುಖದಲ್ಲೆ ಅಧಿಕಾರ ವಹಿಸಿಕೊಡು.</verse>
				<verse number="20">ಸಮಾಜದವರೆಲ್ಲರು ಅವನಿಗೆ ವಿಧೇಯರಾಗಿ ಇರುವಂತೆ ನಿನಗಿರುವ ಗೌರವವನ್ನು ಅವನಿಗೆ ಕೊಡು.</verse>
				<verse number="21">ದೈವೇಚ್ಛೆಯನ್ನು ತಿಳಿದುಕೊಳ್ಳಲು ಅವನು ಮಹಾಯಾಜಕ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಸರ್ವೇಶ್ವರನ ಸನ್ನಿಧಿಯಲ್ಲಿ ‘ಊರಿಮ್’ ಎಂಬ ವಸ್ತುವಿನ ಮೂಲಕ ಅವನ ಪರವಾಗಿ ವಿಚಾರಿಸುವನು, ಯೆಹೋಶುವನು ಮತ್ತು ಇಸ್ರಾಯೇಲ್ ಸಮಾಜದವರೆಲ್ಲರು ಅವನ ಮಾತಿನಂತೆ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದು ಆಜ್ಞಾಪಿಸಿದರು.</verse>
				<verse number="22">ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಯೆಹೋಶುವನನ್ನು ಮಹಾಯಾಜಕ ಎಲ್ಲಾಜಾರನ ಮತ್ತು ಸಮಾಜದವರೆಲ್ಲರ ಮುಂದೆ ನಿಲ್ಲಿಸಿ</verse>
				<verse number="23">ಅವನ ಮೇಲೆ ಹಸ್ತನಿಕ್ಷೇಪ ಮಾಡಿ ಅವನಿಗೆ ಅಧಿಕಾರವನ್ನು ವಹಿಸಿಕೊಟ್ಟನು.</verse>
			</chapter>
			<chapter number="28">
				<verse number="1">ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದ್ದೇನೆಂದರೆ:</verse>
				<verse number="2">“ನನಗೆ ಸಮರ್ಪಿಸಬೇಕಾದ ಬಲಿಗಳನ್ನು, ಅಂದರೆ ದಹನಬಲಿಗಾಗಿ ಇಸ್ರಯೇಲರು ನನಗೆ ತರುವ ಆಹಾರವನ್ನು ತಕ್ಕ ಕಾಲದಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ವಿಧಿಸು.</verse>
				<verse number="3">ಆ ವಿಷಯದಲ್ಲಿ ನೀನು ಅವರಿಗೆ ಹೀಗೆಂದು ಅಪ್ಪಣೆಮಾಡು:</verse>
				<verse number="4">‘ಪ್ರತಿದಿನ ನೀವು ಸರ್ವೇಶ್ವರನಿಗೆ ದಹನಬಲಿಗಾಗಿ ಬೆಳಿಗ್ಗೆ ಒಂದು ಕುರಿ, ಸಂಜೆ ಒಂದು ಕುರಿ ಹೀಗೆ ಎರಡು ಕಳಂಕರಹಿತವಾದ ಒಂದು ವರ್ಷದ ಕುರಿಗಳನ್ನು ಸಮರ್ಪಿಸಬೇಕು.</verse>
				<verse number="5">ಬೆಳಿಗ್ಗೆ ಆ ಕುರಿಯೊಂದಿಗೆ ಧಾನ್ಯ ನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನು ಮತ್ತು ಮೂರು ಸೇರು ಗೋದಿಹಿಟ್ಟನ್ನು ಬೆರೆಸಿ ಸಮರ್ಪಿಸಬೇಕು.</verse>
				<verse number="6">ನೀವು ಪ್ರತಿನಿತ್ಯವು ಸರ್ವೇಶ್ವರನಿಗೆ ಸುಗಂಧಕರವಾದ ಈ ದಹನಬಲಿಯನ್ನು ಮಾಡಬೇಕೆಂದು ಸೀನಾಯಿ ಬೆಟ್ಟದಲ್ಲೇ ನೇಮಕವಾಯಿತು.</verse>
				<verse number="7">ಆ ಕುರಿಯೊಂದಿಗೆ ಪಾನದ್ರವ್ಯಾರ್ಪಣೆಗಾಗಿ ಒಂದುವರೆ ಸೇರು ಮದ್ಯವನ್ನು ಪವಿತ್ರಸ್ಥಾನದಲ್ಲಿ ಪೀಠದ ಮೇಲೆ ಸುರಿಯಬೇಕು.</verse>
				<verse number="8">ಸಂಜೆ ಎರಡನೇ ಕುರಿಯನ್ನು ದಹನಬಲಿ ಕೊಡುವಾಗ ಬೆಳಿಗ್ಗೆ ಮಾಡಿದಂತೆಯೇ ಅದರೊಂದಿಗೆ ಧಾನ್ಯ ಹಾಗು ಪಾನದ್ರವ್ಯಗಳನ್ನು ಸಮರ್ಪಿಸಬೇಕು.</verse>
				<verse number="9">‘ಪ್ರತಿದಿನ ಅರ್ಪಿಸಬೇಕಾದ ದಹನಬಲಿ ಹಾಗು ಅದಕ್ಕೆ ಸಂಬಂಧಿಸಿದ ಪಾನದ್ರವ್ಯ ಇವುಗಳ ಜೊತೆಗೆ</verse>
				<verse number="10">ನೀವು ಸಬ್ಬತ್ ದಿನದಂದು ಹೆಚ್ಚಾಗಿ ಎರಡು ಕಳಂಕರಹಿತವಾದ ವರ್ಷದ ಕುರಿಗಳನ್ನು ಮತ್ತು ಧಾನ್ಯನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಆರು ಸೇರು ಗೋದಿಹಿಟ್ಟನ್ನು ಅದಕ್ಕೆ ತಕ್ಕ ಪಾನದ್ರವ್ಯವನ್ನೂ ಸಮರ್ಪಿಸಬೇಕು.</verse>
				<verse number="11">‘ಅಮಾವಾಸ್ಯೆಯಲ್ಲಿ ದಹನಬಲಿಗಾಗಿ ಕಳಂಕರಹಿತವಾದ ಟಗರು, ವರ್ಷದ ಎರಡು ಹೋರಿ, ಒಂದು ಟಗರು, ವರ್ಷದ ಏಳು ಕುರಿಗಳು - ಇವುಗಳನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು.</verse>
				<verse number="12">ಇವುಗಳ ಜೊತೆಗೆ ಧಾನ್ಯನೈವೇದ್ಯಕ್ಕಾಗಿ ಪ್ರತಿಯೊಂದು ಹೋರಿಗೆ ಒಂಬತ್ತು ಸೇರು, ಟಗರಿಗೆ ಆರು ಸೇರು,</verse>
				<verse number="13">ಕುರಿಯೊಂದಕ್ಕೆ ಮೂರು ಸೇರು - ಈ ಮೇರೆಗೆ ಎಣ್ಣೆಬೆರೆಸಿದ ಗೋದಿಹಿಟ್ಟನ್ನು ಸಮರ್ಪಿಸಬೇಕು. ಇದು ಸರ್ವೇಶ್ವರನಿಗೆ ಸುಗಂಧಕರವಾದ ದಹನಬಲಿಯಾಗುವುದು.</verse>
				<verse number="14">ಇವುಗಳಿಗೆ ತಕ್ಕ ಪಾನಾರ್ಪಣೆ ಯಾವುವೆಂದರೆ - ಒಂದೊಂದು ಹೋರಿಯೊಡನೆ ಮೂರು ಸೇರು, ಟಗರಿನೊಡನೆ ಎರಡು ಸೇರು, ಕುರಿಯೊಡನೆ ಒಂದು ಸೇರು ದ್ರಾಕ್ಷಾರಸ. ವರ್ಷದ ಪ್ರತಿ ಅಮಾವಾಸ್ಯೆಯಲ್ಲಿ ಹೀಗೆ ದಹನಬಲಿಯನ್ನು ಕೊಡಬೇಕು.</verse>
				<verse number="15">ಅಮಾವಾಸ್ಯೆಯಲ್ಲಿ ದಹನಬಲಿಯನ್ನೂ ಅರ್ಪಿಸುವುದಲ್ಲದೆ ಪಾಪಪರಿಹಾರಕಬಲಿಗಾಗಿ ಒಂದು ಹೋತವನ್ನು ಸರ್ವೇಶ್ವರನಿಗೆ ಹೆಚ್ಚಾಗಿ ಸಮರ್ಪಿಸಬೇಕು.</verse>
				<verse number="16">‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಂದು ಸರ್ವೇಶ್ವರಸ್ವಾಮಿ ನೇಮಿಸಿದ ಪಾಸ್ಕಹಬ್ಬವಾಗಬೇಕು.</verse>
				<verse number="17">ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಆರಂಭವಾಗಬೇಕು. ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.</verse>
				<verse number="18">ಮೊದಲನೆಯ ದಿನ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನ ಯಾವ ದುಡಿಮೆಯನ್ನೂ ಮಾಡಬಾರದು.</verse>
				<verse number="19">ಸರ್ವೇಶ್ವರನಿಗೆ ದಹನಬಲಿಗಾಗಿ ಎರಡು ಹೋರಿಗಳನ್ನೂ ಒಂದು ಟಗರನ್ನೂ ಹಾಗು ವರ್ಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಈ ಪ್ರಾಣಿಗಳು ಕಳಂಕರಹಿತವಾಗಿರಬೇಕು.</verse>
				<verse number="20">ಇವುಗಳ ಜೊತೆಗೆ ಧಾನ್ಯನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಹಿಟ್ಟನ್ನು ತಂದುಕೊಡಬೇಕು. ಹೋರಿಗೆ ಒಂಬತ್ತು ಸೇರು, ಟಗರಿಗೆ ಆರು ಸೇರು,</verse>
				<verse number="21">ಒಂದೊಂದು ಕುರಿಗೆ ಮೂರು ಸೇರು ಹೀಗೆ ತಂದುಕೊಡಬೇಕು.</verse>
				<verse number="22">ಇದಲ್ಲದೆ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಸಮರ್ಪಿಸಬೇಕು.</verse>
				<verse number="23">ನಿತ್ಯಗಟ್ಟಲೆಯಾಗಿ ಪ್ರತಿದಿನ ಬೆಳಿಗ್ಗೆ ಒಪ್ಪಿಸಲಾಗುವ ದಹನಬಲಿಯ ಜೊತೆಗೆ ಇವುಗಳನ್ನು ಸೇರಿಸಿ ಸಮರ್ಪಿಸಬೇಕು.</verse>
				<verse number="24">ಆ ಏಳು ದಿನಗಳಲ್ಲೂ ದೈನಿಕ ದಹನಬಲಿಯನ್ನು ಮತ್ತು ಅದಕ್ಕೆ ಸೇರಿದ ಪಾನಾರ್ಪಣೆಯನ್ನು ಒಪ್ಪಿಸಬೇಕಲ್ಲದೆ ಮೇಲೆ ಹೇಳಿದ ಕ್ರಮದ ಮೇರೆಗೆ ಪ್ರತಿದಿನವೂ ದಹನಬಲಿ ರೂಪವಾಗಿ ಸರ್ವೇಶ್ವರನಿಗೆ ಅನ್ನಾರ್ಪಣೆ ಮಾಡಿ ಅವರಿಗೆ ಸುಗಂಧ ಸುವಾಸನೆಯನ್ನು ಉಂಟುಮಾಡಬೇಕು.</verse>
				<verse number="25">ಏಳನೆಯ ದಿನದಲ್ಲೂ ಸಭೆ ಕೂಡಬೇಕು. ಆ ದಿನದಂದು ಯಾವ ದುಡಿಮೆಯನ್ನೂ ಮಾಡಬಾರದು.</verse>
				<verse number="26">‘ಪಾಸ್ಕವಾದ ಏಳು ವಾರಗಳ ಮೇಲೆ ನೀವು ಹೊಸ ಬೆಳೆಯ ಗೋದಿಯನ್ನು ನೈವೇದ್ಯ ಮಾಡಬೇಕು. ಆ ಪ್ರಥಮ ಫಲಾರ್ಪಣೆಯ ದಿನ ನೀವು ಯಾವ ದುಡಿಮೆಯನ್ನೂ ಮಾಡದೆ ದೇವಾರಾಧನೆಗಾಗಿ ಸಭೆಸೇರಬೇಕು.</verse>
				<verse number="27">ಆ ದಿನ ಸರ್ವೇಶ್ವರನಿಗೆ ಸುಗಂಧ ಸುವಾಸನೆಯುಂಟು ಮಾಡುವುದಕ್ಕಾಗಿ ಎರಡು ಹೋರಿ, ಒಂದು ಟಗರು, ಹಾಗು ವರ್ಷದ ಏಳು ಕುರಿ ಇವುಗಳನ್ನು,</verse>
				<verse number="28">ಹಾಗು ಧಾನ್ಯನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಹಿಟ್ಟನ್ನು ಅಂದರೆ, ಪ್ರತಿಯೊಂದು ಹೋರಿಗೆ ಒಂಬತ್ತು ಸೇರು,</verse>
				<verse number="29">ಟಗರಿಗೆ ಆರು ಸೇರು, ಕುರಿಗೆ ಮೂರು ಸೇರು ಹಿಟ್ಟನ್ನು;</verse>
				<verse number="30">ಮತ್ತು ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಸಮರ್ಪಿಸಬೇಕು.</verse>
				<verse number="31">ಈ ಪ್ರಾಣಿಗಳೆಲ್ಲಾ ಕಳಂಕರಹಿತವಾಗಿರಬೇಕು. ದೈನಿಕ ದಹನಬಲಿ ಮತ್ತು ಅದಕ್ಕೆ ಸೇರಿದ ಧಾನ್ಯನೈವೇದ್ಯ ಇವುಗಳ ಜೊತೆಗೆ ಮೇಲೆ ಹೇಳಿದ ಬಲಿಗಳನ್ನೂ ಅವುಗಳೊಡನೆ ಕೊಡಬೇಕಾದ ಪಾನಾರ್ಪಣೆಗಳನ್ನೂ ಸೇರಿಸಿ ಸಮರ್ಪಿಸಬೇಕು.</verse>
			</chapter>
			<chapter number="29">
				<verse number="1">‘ಏಳನೆಯ ತಿಂಗಳಿನ ಮೊದಲನೆಯ ದಿನ ನೀವು ಯಾವ ದುಡಿಮೆಯನ್ನೂ ಮಾಡದೆ ದೇವಾರಾಧನೆಗಾಗಿ ಸಭೆ ಸೇರಬೇಕು. ಅದು ನಿಮಗೆ ಕೊಂಬೂದುವ ದಿನ.</verse>
				<verse number="2">ಅಂದು ನೀವು ಸರ್ವೇಶ್ವರನಿಗೇ ಸುಗಂಧಕರವಾದ ಒಂದು ಹೋರಿ ದಹನಬಲಿಗಾಗಿ ಕಳಂಕರಹಿತವಾದ ಒಂದು ಹೋರಿ, ಒಂದು ಟಗರು ಮತ್ತು ವರ್ಷದ ಏಳು ಕುರಿಗಳನ್ನು ಹಾಗು</verse>
				<verse number="3">ಧಾನ್ಯನೈವೇದ್ಯಕ್ಕಾಗಿ ಆ ಒಂದು ಹೋರಿಗೆ ಒಂಬತ್ತು ಸೇರು</verse>
				<verse number="4">ಟಗರಿಗೆ ಆರು ಸೇರು, ಒಂದೊಂದು ಕುರಿಗೆ ಮೂರು ಸೇರು ಹೀಗೆ ಎಣ್ಣೆಬೆರೆಸಿದ ಗೋದಿಹಿಟ್ಟನ್ನು ಮತ್ತು</verse>
				<verse number="5">ಪಾಪಪರಿಹಾರಕ ಬಲಿಗಾಗಿ ಒಂದು ಹೋತವನ್ನು ಸಮರ್ಪಿಸಬೇಕು.</verse>
				<verse number="6">ಅಮಾವಾಸ್ಯೆಯಲ್ಲೂ ಪ್ರತಿದಿನವೂ ಸಲ್ಲಿಸುವ ದಹನಬಲಿಗಳ ಹಾಗು ಅವುಗಳಿಗೆ ಸಂಬಂಧಿಸಿದ ಧಾನ್ಯ-ಪಾನ ನೈವೇದ್ಯಗಳ ಜೊತೆಗೆ ಮೇಲೆ ಹೇಳಿದ ಬಲಿಗಳನ್ನು ಕೂಡ ಸಮರ್ಪಿಸಬೇಕು. ಅವು ಸರ್ವೇಶ್ವರನಿಗೆ ಸುಗಂಧಕರವಾದ ದಹನಬಲಿಯಾಗಿರುವುವು.</verse>
				<verse number="7">‘ಉಪವಾಸ ಆಚರಣೆಯ ಏಳನೆಯ ತಿಂಗಳಿನ ಹತ್ತನೆಯ ದಿನ ನೀವು ಯಾವ ದುಡಿಮೆಯನ್ನು ಮಾಡದೆ ದೇವಾರಾಧನೆಗಾಗಿ ಸಭೆ ಕೂಡಬೇಕು.</verse>
				<verse number="8">ಸರ್ವೇಶ್ವರನಿಗೆ ಸುಗಂಧಕರವಾದ ದಹನಬಲಿಗಾಗಿ ಕಳಂಕರಹಿತವಾದ ಒಂದು ಹೋರಿ, ಒಂದು ಟಗರು, ವರ್ಷದ ಏಳು ಕುರಿ ಇವುಗಳನ್ನು ಹಾಗು</verse>
				<verse number="9">ಧಾನ್ಯನೈವೇದ್ಯಕ್ಕಾಗಿ ಹೋರಿಗೆ ಒಂಬತ್ತು ಸೇರು,</verse>
				<verse number="10">ಟಗರಿಗೆ ಆರು ಸೇರು, ಕುರಿಯೊಂದಕ್ಕೆ ಮೂರು ಸೇರು ಈ ಮೇರೆಗೆ ಎಣ್ಣೆಬೆರೆಸಿದ ಗೋದಿಹಿಟ್ಟನ್ನು ಮತ್ತು</verse>
				<verse number="11">ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ಪಾಪ ಪರಿಹಾರಕ ಬಲಿ, ದೈನಿಕ ದಹನಬಲಿ ಇದರ ಧಾನ್ಯ-ಪಾನ ದ್ರವ್ಯ ನೈವೇದ್ಯ ಇವುಗಳ ಸಮೇತ ಮೇಲೆ ಹೇಳಿದ ಬಲಿಗಳನ್ನು ಕೂಡ ಸಮರ್ಪಿಸಬೇಕು.</verse>
				<verse number="12">‘ಏಳನೆಯ ತಿಂಗಳಿನ ಹದಿನಾಲ್ಕನೆಯ ದಿನ ದೇವಾರಾಧನೆಗಾಗಿ ಸಭೆ ಕೂಡಬೇಕು. ನೀವು ಆ ದಿನದಂದು ಯಾವ ದುಡಿಮೆಯನ್ನೂ ಮಾಡಕೂಡದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಸರ್ವೇಶ್ವರನಿಗೆ ಹಬ್ಬವನ್ನು ಆಚರಿಸಬೇಕು.</verse>
				<verse number="13">ಆ ದಿನದಲ್ಲಿ ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧಿಸಿದ ಧಾನ್ಯ-ಪಾನ ನೈವೇದ್ಯಗಳನ್ನೂ ಅರ್ಪಿಸಬೇಕು. ಅವುಗಳ ಸುಗಂಧಕರವಾದ ದಹನಬಲಿಗಾಗಿ ಕಳಂಕರಹಿತ ಆದ ಹದಿಮೂರು ಹೋರಿಗಳನ್ನು, ಎರಡು ಟಗರುಗಳನ್ನು, ವರ್ಷದ ಹದಿನಾಲ್ಕು ಕುರಿಗಳನ್ನು ಸಮರ್ಪಿಸಬೇಕು.</verse>
				<verse number="14">ಧಾನ್ಯನೈವೇದ್ಯಕ್ಕಾಗಿ ಪ್ರತಿ ಒಂದು ಹೋರಿಗೆ ಒಂಬತ್ತು ಸೇರು,</verse>
				<verse number="15">ಟಗರಿಗೆ ಆರು ಸೇರು, ಹಾಗು ಕುರಿಗೆ ಮೂರು ಸೇರು ಹೀಗೆ ಎಣ್ಣೆಬೆರೆಸಿದ ಗೋದಿಹಿಟ್ಟನ್ನು ಒಪ್ಪಿಸಬೇಕು;</verse>
				<verse number="16">ಅಂತೆಯೇ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ತಂದು ಸಮರ್ಪಿಸಬೇಕು.</verse>
				<verse number="17">ಆ ಹಬ್ಬದ ಎರಡನೆಯ ದಿನದಲ್ಲಿ ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧಿಸಿದ ಧಾನ್ಯ ಹಾಗು ಪಾನಾರ್ಪಣೆಗಳ ಜೊತೆಗೆ ಕಳಂಕರಹಿತವಾದ ಹನ್ನೆರಡು ಹೋರಿ, ಎರಡು ಟಗರು, ವರ್ಷದ ಹದಿನಾಲ್ಕು ಕುರಿಗಳು ಇವುಗಳನ್ನು ಸಮರ್ಪಿಸಬೇಕು.</verse>
				<verse number="18">ಆ ಪ್ರಾಣಿಗಳಲ್ಲಿ ಪ್ರತಿಯೊಂದಕ್ಕೆ ಸಂಬಂಧಿಸಿದ ಪ್ರಕಾರ ಧಾನ್ಯ ಹಾಗು ಪಾನಗಳನ್ನು ಒಪ್ಪಿಸಬೇಕು.</verse>
				<verse number="19">ಪಾಪ ಪರಿಹಾರಕಬಲಿಗಾಗಿ ಒಂದು ಹೋತವನ್ನು ಕೂಡ ಅರ್ಪಿಸಬೇಕು.</verse>
				<verse number="20">‘ಮೂರನೆಯ ದಿನ, ದೈನಿಕ ದಹನಬಲಿಯನ್ನು, ಅದಕ್ಕೆ ಸಂಬಂಧಿಸಿದ ಧಾನ್ಯ-ಪಾನದ್ರವ್ಯಗಳ ಜೊತೆಗೆ ಕಳಂಕರಹಿತವಾದ ಹನ್ನೊಂದು ಹೋರಿ, ಎರಡು ಟಗರು ಹಾಗು ವರ್ಷದ ಹದಿನಾಲ್ಕು ಕುರಿ ಇವುಗಳನ್ನು ಸಮರ್ಪಿಸಬೇಕು.</verse>
				<verse number="21">ನೈವೇದ್ಯಕ್ಕಾಗಿ ಆ ಪ್ರಾಣಿಗಳಲ್ಲಿ ಪ್ರತಿಯೊಂದಕ್ಕೆ ಸಂಬಂಧಿಸಿದ ಧಾನ್ಯಪಾನಗಳನ್ನು ಒಪ್ಪಿಸಬೇಕು;-</verse>
				<verse number="22">ಅಂತೆಯೇ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನೂ ಅರ್ಪಿಸಬೇಕು.</verse>
				<verse number="23">‘ನಾಲ್ಕನೆಯ ದಿನ, ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧವಾದ ಧಾನ್ಯ ಹಾಗು ಪಾನಾರ್ಪಣೆಗಳ ಜೊತೆ ಕಳಂಕರಹಿತವಾದ ಹತ್ತು ಹೋರಿ, ಎರಡು ಟಗರು, ವರ್ಷದ ಹದಿನಾಲ್ಕು ಕುರಿಗಳು, ಇವುಗಳನ್ನು ಸಮರ್ಪಿಸಬೇಕು.</verse>
				<verse number="24">ನೈವೇದ್ಯಕ್ಕಾಗಿ ಪ್ರಾಣಿಗಳಲ್ಲಿ ಪ್ರತಿಯೊಂದಕ್ಕೆ ಸಂಬಂಧವಾದ ಧಾನ್ಯ ಹಾಗು ಪಾನದ್ರವ್ಯಗಳನ್ನು ಒಪ್ಪಿಸಬೇಕು;</verse>
				<verse number="25">ಪಾಪಪರಿಹಾರಕ ಬಲಿಗಾಗಿ ಒಂದು ಹೋತವನ್ನೂ ಅರ್ಪಿಸಬೇಕು.</verse>
				<verse number="26">‘ಐದನೆಯ ದಿನ, ದೈನಿಕ ದಹನಬಲಿಯನ್ನು, ಅದಕ್ಕೆ ಸಂಬಂಧಿಸಿದ ಧಾನ್ಯ ಹಾಗು ಪಾನಾರ್ಪಣೆಗಳ ಜೊತೆಗೆ ಕಳಂಕರಹಿತವಾದ ಒಂಬತ್ತು ಹೋರಿ, ಎರಡು ಟಗರು, ವರ್ಷದ ಹದಿನಾಲ್ಕು ಕುರಿಗಳನ್ನು ಅರ್ಪಿಸಬೇಕು;</verse>
				<verse number="27">ನೈವೇದ್ಯಕ್ಕಾಗಿ ಈ ಪ್ರಾಣಿಗಳಲ್ಲಿ ಪ್ರತಿಯೊಂದಕ್ಕೆ ಸಂಬಂಧವಾದ ಧಾನ್ಯ ಹಾಗು ಪಾನದ್ರವ್ಯಗಳನ್ನು ಒಪ್ಪಿಸಬೇಕು.</verse>
				<verse number="28">ಪಾಪಪರಿಹಾರಕ ಬಲಿಗಾಗಿ ಒಂದು ಹೋತವನ್ನು ಸಮರ್ಪಿಸಬೇಕು.</verse>
				<verse number="29">‘ಆರನೆಯ ದಿನ, ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧಿಸಿದ ಧಾನ್ಯ ಹಾಗು ಪಾನರ್ಪಣೆಗಳ ಜೊತೆಗೆ ಕಳಂಕರಹಿತವಾದ ಎಂಟು ಹೋರಿ, ಎರಡು ಟಗರು, ವರ್ಷದ ಹದಿನಾಲ್ಕು ಕುರಿಗಳನ್ನೂ ಸಮರ್ಪಿಸಬೇಕು.</verse>
				<verse number="30">ನೈವೇದ್ಯಕ್ಕಾಗಿ ಆ ಪ್ರಾಣಿಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರ ಧಾನ್ಯ ಹಾಗು ಪಾನಾರ್ಪಣೆಗಳನ್ನು ಒಪ್ಪಿಸಬೇಕು.</verse>
				<verse number="31">ಪಾಪಪರಿಹಾರಕ ಬಲಿಗಾಗಿ ಒಂದು ಹೋತವನ್ನು ಅರ್ಪಿಸಬೇಕು.</verse>
				<verse number="32">‘ಏಳನೆಯ ದಿನ, ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧಿಸಿದ ಧಾನ್ಯ ಹಾಗು ಪಾನಾರ್ಪಣೆಗಳ ಜೊತೆಗೆ ಕಳಂಕರಹಿತವಾದ ಏಳು ಹೋರಿ, ಎರಡು ಟಗರು, ವರ್ಷದ ಹದಿನಾಲ್ಕು ಕುರಿಗಳನ್ನು ಸಮರ್ಪಿಸಬೇಕು.</verse>
				<verse number="33">ನೈವೇದ್ಯಕ್ಕಾಗಿ ಈ ಪ್ರಾಣಿಗಳಲ್ಲಿ ಪ್ರತಿಯೊಂದಕ್ಕೆ ನೇಮಕವಾದ ಪ್ರಕಾರ ಧಾನ್ಯ ಹಾಗು ಪಾನಾರ್ಪಣೆಗಳನ್ನು ಒಪ್ಪಿಸಬೇಕು.</verse>
				<verse number="34">ಪಾಪಪರಿಹಾರಕ ಬಲಿಗಾಗಿ ಒಂದು ಹೋತವನ್ನೂ ಅರ್ಪಿಸಬೇಕು.</verse>
				<verse number="35">‘ಎಂಟನೆಯ ದಿನ, ದೇವಾರಾಧನೆಗೆ ಸಭೆಕೂಡಬೇಕು. ಅಂದು ಯಾವ ದುಡಿಮೆಯನ್ನೂ ಮಾಡಕೂಡದು.</verse>
				<verse number="36">ದೈನಿಕ ದಹನಬಲಿಯನ್ನೂ ಅದಕ್ಕೆ ಸಂಬಂಧಿಸಿದ ಧಾನ್ಯ ಹಾಗು ಪಾನಾರ್ಪಣೆಗಳನ್ನೂ ಅರ್ಪಿಸಬೇಕು. ಅವುಗಳ ಜೊತೆಗೆ ಸರ್ವೇಶ್ವರನಿಗೆ ಸುಗಂಧಕರ ದಹನಬಲಿಗಾಗಿ ಕಳಂಕರಹಿತವಾದ ಒಂದು ಹೋರಿ, ಒಂದು ಟಗರು, ವರ್ಷದ ಏಳು ಕುರಿಗಳನ್ನು ಸಮರ್ಪಿಸಬೇಕು.</verse>
				<verse number="37">ನೈವೇದ್ಯಕ್ಕಾಗಿ ಈ ಪ್ರಾಣಿಗಳಲ್ಲಿ ಪ್ರತಿ ಒಂದಕ್ಕೆ ನೇಮಕವಾದ ಪ್ರಕಾರ ಧಾನ್ಯ ಹಾಗು ಪಾನಾರ್ಪಣೆಗಳನ್ನು ಒಪ್ಪಿಸಬೇಕು.</verse>
				<verse number="38">ಪಾಪಪರಿಹಾರಕ ಬಲಿಗಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.</verse>
				<verse number="39">‘ನೀವು ಕಾಣಿಕೆಯಾಗಿ ಆಗಲಿ, ಹರಕೆಯನ್ನು ತೀರಿಸುವುದಕ್ಕಾಗಿ ಆಗಲಿ ಮಾಡುವ ದಹನಬಲಿ, ಧಾನ್ಯನೈವೇದ್ಯ, ಪಾನಾರ್ಪಣೆ, ಸಮಾಧಾನಬಲಿ ಇವುಗಳನ್ನು ಮಾತ್ರವಲ್ಲದೆ ಹಬ್ಬದ ದಿನಗಳಲ್ಲಿ ಮೇಲೆ ಸೂಚಿಸಿರುವ ಬಲಿಗಳನ್ನು ಹೆಚ್ಚಾಗಿ ಮಾಡಬೇಕು’.”</verse>
				<verse number="40">ಸರ್ವೇಶ್ವರಸ್ವಾಮಿ ಕೊಟ್ಟ ಈ ಎಲ್ಲ ಆಜ್ಞೆಗಳನ್ನು ಮೋಶೆ ಇಸ್ರಯೇಲರಿಗೆ ತಿಳಿಸಿದನು.</verse>
			</chapter>
			<chapter number="30">
				<verse number="1">ಮೋಶೆ ಇಸ್ರಯೇಲರ ಕುಲನಾಯಕರಿಗೆ ಹೀಗೆಂದು ಹೇಳಿದನು: ಸರ್ವೇಶ್ವರ ಸ್ವಾಮಿಯ ಆಜ್ಞೆ ಇದು:</verse>
				<verse number="2">“ನಿಮ್ಮಲ್ಲಿ ಯಾರಾದರು ಸರ್ವೇಶ್ವರನಿಗೆ ಹರಕೆ ಮಾಡಿದರೆ, ಇಲ್ಲವೆ ತಾನು ವಸ್ತುವೊಂದನ್ನು ಮುಟ್ಟುವುದಿಲ್ಲವೆಂದು ಆಣೆಯಿಟ್ಟು ಹೇಳಿದರೆ ಅಂಥವನು ತನ್ನ ಮಾತನ್ನು ಮೀರದೆ ನುಡಿದಂತೆ ನೆರವೇರಿಸಬೇಕು.</verse>
				<verse number="3">“ಕನ್ಯೆಯೊಬ್ಬಳು ತನ್ನ ತಂದೆಯ ಮನೆಯಲ್ಲಿದ್ದು ಸರ್ವೇಶ್ವರನಿಗೆ ಹರಕೆಯನ್ನು ಮಾಡಿದಾಗ ಇಲ್ಲವೆ ಯಾವುದಾದರೊಂದನ್ನು ಮುಟ್ಟುವುದಿಲ್ಲವೆಂದು ಪ್ರತಿಜ್ಞೆಮಾಡಿದಾಗ</verse>
				<verse number="4">ಅವಳ ತಂದೆ ಆ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಅವಳು ಆ ಹರಕೆಯನ್ನು ನೆರವೇರಿಸಲೇಬೇಕು; ಯಾವುದನ್ನು ಮುಟ್ಟುವುದಿಲ್ಲವೆಂದು ಹೇಳಿದ್ದಳೋ ಅದನ್ನು ಮುಟ್ಟಲೇಬಾರದು.</verse>
				<verse number="5">ಆದರೆ ಅವಳ ತಂದೆ ಆ ಸಂಗತಿಯನ್ನು ತಿಳಿದು ಹಾಗೆ ಮಾಡಬಾರದೆಂದು ಆಜ್ಞೆ ಮಾಡಿದರೆ ಅವಳು ಮಾಡಿದ ಹರಕೆ ಹಾಗೂ ಪ್ರತಿಜ್ಞೆಗಳು ವ್ಯರ್ಥವಾಗುತ್ತವೆ. ತಂದೆ ಬೇಡವೆಂದು ಹೇಳಿದ್ದರಿಂದ ಸರ್ವೇಶ್ವರ ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.</verse>
				<verse number="6">“ಆಕೆ ಮಾಡಿದ ಹರಕೆ ಇಲ್ಲವೆ ಪರ್ಯಾಲೋಚಿಸದೆ ಮಾಡಿದ ಪ್ರತಿಜ್ಞೆ ಮುಗಿಯುವಷ್ಟರೊಳಗೆ ಅವಳಿಗೆ ಮದುವೆಯಾಯಿತೆಂದು ಇಟ್ಟುಕೊಳ್ಳೋಣ.</verse>
				<verse number="7">ಆಗ ಗಂಡಸು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ ಪ್ರತಿಜ್ಞೆಗಳೂ ನಡೆಯಲೇಬೇಕು.</verse>
				<verse number="8">ಆದರೆ ಗಂಡನು, ಕೇಳಿದಾಗಲೆ ಬೇಡವೆಂದು ಆಜ್ಞೆ ಮಾಡಿದರೆ ಆ ಹರಕೆ ಇಲ್ಲವೆ ಆ ಅವಿಚಾರ ಪ್ರತಿಜ್ಞೆ ನಿರರ್ಥಕವಾಗುತ್ತವೆ. ಸರ್ವೇಶ್ವರ ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.</verse>
				<verse number="9">“ವಿಧವೆ ಇಲ್ಲವೆ ಗಂಡನಿಂದ ಬೇರ್ಪಟ್ಟ ಮಹಿಳೆ ಇಂಥ ಪ್ರಮಾಣವನ್ನು ಕೈಗೊಂಡಿದ್ದರೆ ಅದು ನಿಲ್ಲುತ್ತದೆ. ಅವಳು ಅದನ್ನು ನೆರವೇರಿಸಬೇಕು.</verse>
				<verse number="10">“ಮಡದಿ ಅಂಥ ಹರಕೆಯನ್ನಾಗಲಿ, ಪ್ರಮಾಣವನ್ನಾಗಲಿ ಮಾಡಿದಾಗ</verse>
				<verse number="11">ಅವಳ ಗಂಡ ಅದನ್ನು ತಿಳಿದೂ ಅಡ್ಡಿಮಾಡದೆ ಸುಮ್ಮನಿದ್ದರೆ ಆ ಹರಕೆಗಳೂ ಪ್ರತಿಜ್ಞೆಗಳೂ ನಿಲ್ಲುತ್ತವೆ.</verse>
				<verse number="12">ಆದರೆ ಗಂಡನು ಅವುಗಳನ್ನು ತಿಳಿದಾಗಲೇ ಬೇಡವೆಂದರೆ ಅವು ರದ್ದಾಗುತ್ತವೆ. ಗಂಡನು ರದ್ದುಮಾಡಿದ್ದರಿಂದ ಸರ್ವೇಶ್ವರ ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.</verse>
				<verse number="13">ಹೆಂಡತಿ ಮಾಡಿದ ಹರಕೆಯನ್ನು ಹಾಗು ಉಪವಾಸವಿರುವೆನೆಂದು ಅವಳು ಮಾಡಿದ ಪ್ರಮಾಣವನ್ನು ದೃಢೀಕರಿಸುವುದಕ್ಕಾಗಲಿ, ರದ್ದುಪಡಿಸುವುದಕ್ಕಾಗಲಿ ಗಂಡನಿಗೆ ಹಕ್ಕಿದೆ.</verse>
				<verse number="14">ಆದರೆ ಅವಳ ಗಂಡ ಯಾವ ಅಡ್ಡಿಯನ್ನೂ ಮಾಡದೆ ದಿನದಿನಕ್ಕೂ ಸುಮ್ಮನಿದ್ದರೆ ಅವಳ ಹರಕೆಗಳನ್ನೂ ಅವನು ಅನುಮೋದಿಸಿದಂತಾಗುವುದು.</verse>
				<verse number="15">ಅನಂತರ ಅವನು ಬೇಡವೆಂದರೆ ಆ ಪಾಪದ ಫಲವನ್ನು ಅವನೇ ಅನುಭವಿಸಬೇಕು.”</verse>
				<verse number="16">ಇವೇ ಗಂಡಹೆಂಡಿರ ವಿಷಯವಾಗಿ ಹಾಗು ಇನ್ನೂ ಮದುವೆಯಿಲ್ಲದ ಪುತ್ರಿ ಮತ್ತು ಅವಳ ತಂದೆಯ ವಿಷಯವಾಗಿ ಸರ್ವೇಶ್ವರ ಸ್ವಾಮಿ ಕೊಟ್ಟ ನಿಯಮಗಳು.</verse>
			</chapter>
			<chapter number="31">
				<verse number="1">ಸರ್ವೇಶ್ವರ ಸ್ವಾಮಿ ಮೋಶೆಗೆ:</verse>
				<verse number="2">“ಮಿದ್ಯಾನರು ಇಸ್ರಯೇಲರಿಗೆ ಮಾಡಿದ ಹಿಂಸೆಗಾಗಿ ನೀನು ಮುಯ್ಯಿತೀರಿಸಬೇಕು. ಅನಂತರ ನಿನ್ನ ಪೂರ್ವಜರ ಬಳಿಗೆ ನೀನು ಸೇರಬೇಕು,” ಎಂದರು.</verse>
				<verse number="3">ಆಗ ಮೋಶೆ ಇಸ್ರಯೇಲರಿಗೆ, “ನೀವು ಒಂದೊಂದು ಕುಲದಿಂದ ಸಾವಿರ ಜನರ ಮೇರೆಗೆ ಕಾಲಾಳುಗಳನ್ನು ಯುದ್ಧಕ್ಕೆ ಸಿದ್ಧಮಾಡಿಕೊಳ್ಳಿ.</verse>
				<verse number="4">ಅವರು ಮಿದ್ಯಾನರಿಗೆ ಸರ್ವೇಶ್ವರ ಆಜ್ಞಾಪಿಸಿದ ದಂಡನೆಯನ್ನು ಮಾಡಬೇಕು,” ಎಂದು ಅಪ್ಪಣೆ ಕೊಟ್ಟನು.</verse>
				<verse number="5">ಅಂತೆಯೇ ಇಸ್ರಯೇಲರು ಕುಲ ಒಂದಕ್ಕೆ ಸಾವಿರ ಮಂದಿಯ ಮೇರೆಗೆ ಯುದ್ಧಕ್ಕೆ ಸನ್ನದ್ಧರಾದ ಹನ್ನೆರಡು ಸಾವಿರ ಮಂದಿಯನ್ನು ಲೆಕ್ಕಿಸಿಕೊಟ್ಟರು.</verse>
				<verse number="6">ಮೋಶೆ ಇವರನ್ನು ಮಹಾಯಾಜಕನಾದ ಎಲ್ಲಾಜಾರನ ಮಗ ಫೀನೆಹಾಸನ ಮುಂದಾಳತ್ವದಲ್ಲಿ ಪವಿತ್ರ ಉಪಕರಣಗಳೊಂದಿಗೂ ಯುದ್ಧಕಹಳೆಗಳೊಂದಿಗೂ ಯುದ್ಧಕ್ಕೆ ಕಳುಹಿಸಿದನು.</verse>
				<verse number="7">ಸರ್ವೇಶ್ವರನ ಆಜ್ಞೆಯಂತೆ ಅವರು ಮಿದ್ಯಾನರೊಡನೆ ಯುದ್ಧಮಾಡಿ ಗಂಡಸರೆಲ್ಲರನ್ನು ಸಂಹಾರ ಮಾಡಿದರು.</verse>
				<verse number="8">ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್ ಹಾಗು ರೆಬಾ ಎಂಬ ಮಿದ್ಯಾನರ ಐದು ಮಂದಿ ರಾಜರು ಇದ್ದರು. ಅದೂ ಅಲ್ಲದೆ ಬೆಯೋರನ ಮಗ ಬಿಳಾಮನನ್ನು ಕತ್ತಿಯಿಂದ ಕೊಂದುಹಾಕಿದರು.</verse>
				<verse number="9">ಇಸ್ರಯೇಲರು ಮಿದ್ಯಾನರ ಎಲ್ಲಾ ಮಡದಿ ಮಕ್ಕಳನ್ನೂ ಸೆರೆಹಿಡಿದರು; ಎಲ್ಲಾ ದನಕುರಿಗಳನ್ನೂ ಆಸ್ತಿಪಾಸ್ತಿಯನ್ನೂ ಸೂರೆಮಾಡಿದರು.</verse>
				<verse number="10">ಅವರಿದ್ದ ಊರುಕೇರಿಗಳನ್ನು ಸುಟ್ಟುಹಾಕಿದರು.</verse>
				<verse number="11">ನರಮಾನವರೆನ್ನದೆ, ಪಶುಪ್ರಾಣಿಗಳೆನ್ನದೆ ಏನನ್ನೂ ಬಿಡದೆ ಎಲ್ಲವನ್ನು ಕೊಳ್ಳೆಹೊಡೆದರು.</verse>
				<verse number="12">ಹೀಗೆ ಸೆರೆಯಾಳುಗಳನ್ನೂ ಪಶುಪ್ರಾಣಿಗಳನ್ನೂ ಆಸ್ತಿಪಾಸ್ತಿಯನ್ನೂ ತೆಗೆದುಕೊಂಡು ಜೆರಿಕೋ ಪಟ್ಟಣದ ಎದುರಿಗಿರುವ ಜೋರ್ಡನ್ ನದಿಯ ತೀರಕ್ಕೆ ಬಂದರು. ಅಲ್ಲಿ ಮೋವಾಬ್ಯರ ಮೈದಾನದ ಪಾಳೆಯದಲ್ಲಿದ್ದ ಮೋಶೆ, ಮಹಾಯಾಜಕ ಎಲ್ಲಾಜಾರ್ ಹಾಗು ಇಸ್ರಯೇಲರ ಸರ್ವಸಮಾಜದವರ ಬಳಿಗೆ ಬಂದರು.</verse>
				<verse number="13">ಮೋಶೆ, ಮಹಾಯಾಜಕ ಎಲ್ಲಾಜಾರನು ಮತ್ತು ಸಮಾಜದ ಮುಖಂಡರು ಪಾಳೆಯದ ಹೊರಗೆ ಬಂದು ಯುದ್ಧವೀರರನ್ನು ಎದುರುಗೊಂಡರು.</verse>
				<verse number="14">ಯುದ್ಧಭೂಮಿಯಿಂದ ಬಂದಿದ್ದ ಆ ಸೈನ್ಯದ ಸಹಸ್ರಾಧಿಪತಿಗಳನ್ನು ಹಾಗು ಶತಾಧಿಪತಿಗಳನ್ನು ಕಂಡು ಮೋಶೆ ಕೋಪಗೊಂಡನು.</verse>
				<verse number="15">“ನೀವು ಮಹಿಳೆಯರನ್ನೆಲ್ಲ ಉಳಿಸಿದ್ದೇಕೆ?</verse>
				<verse number="16">ಪೆಗೋರದ ಬಾಳನ ವಿಷಯದಲ್ಲಿ ಬಿಳಾಮನ ದುರಾಲೋಚನೆಯನ್ನು ಅನುಸರಿಸಿ, ಇಸ್ರಯೇಲರನ್ನು ಸರ್ವೇಶ್ವರನಿಗೆ ದ್ರೋಹಿಗಳನ್ನಾಗಿಸಿ, ಸಮಾಜದವರಲ್ಲಿ ಘೋರ ವ್ಯಾಧಿಯುಂಟಾಗುವಂತೆ ಮಾಡಿದವರು ಅವರೇ ಅಲ್ಲವೆ?</verse>
				<verse number="17">ಆದಕಾರಣ ಈ ಗುಂಪಿನಲ್ಲಿರುವ ಎಲ್ಲ ಗಂಡುಮಕ್ಕಳನ್ನು ಮತ್ತು ಪುರುಷ ಸಂಗಮಮಾಡಿದ ಎಲ್ಲ ಹೆಂಗಸರನ್ನು ಕೊಲ್ಲಬೇಕು.</verse>
				<verse number="18">ಪುರುಷ ಸಂಗಮ ಮಾಡದಿರುವ ಕನ್ಯೆಯರನ್ನು ನಿಮಗೋಸ್ಕರ ಉಳಿಸಿಕೊಳ್ಳಬೇಕು.</verse>
				<verse number="19">ನಿಮ್ಮಲ್ಲಿ ಮನುಷ್ಯಪ್ರಾಣ ತೆಗೆದವರು ಹಾಗು ಶವ ಸೋಂಕಿದವರು ಏಳು ದಿನದವರೆಗೆ ಪಾಳೆಯದ ಹೊರಗಡೆ ಇರಬೇಕು. ಮೂರನೆಯ ಮತ್ತು ಏಳನೆಯ ದಿನ ನಿಮ್ಮನ್ನೂ ಸೆರೆಯಾಳುಗಳನ್ನೂ ಶುದ್ಧೀಕರಿಸಿಕೊಳ್ಳಬೇಕು.</verse>
				<verse number="20">ಎಲ್ಲ ಬಟ್ಟೆಬರೆಗಳನ್ನೂ ತೊಗಲಿನ ಸಾಮಾನುಗಳನ್ನೂ ಮೇಕೆ ಕೂದಲಿನ ವಸ್ತ್ರಗಳನ್ನೂ ಹಾಗು ಮರದ ಸಾಮಾನುಗಳನ್ನೂ ಶುದ್ಧಮಾಡಿಕೊಳ್ಳಬೇಕು,” ಎಂದು ಹೇಳಿದನು.</verse>
				<verse number="21">ಮಹಾಯಾಜಕ ಎಲ್ಲಾಜಾರನು ಯುದ್ಧಕ್ಕೆ ಹೋಗಿ ಬಂದಿದ್ದ ಸೈನಿಕರಿಗೆ ಹೀಗೆಂದನು: “ಸರ್ವೇಶ್ವರಸ್ವಾಮಿ ಮೋಶೆಗೆ ಅಪ್ಪಣೆಮಾಡಿದ ವಿಧಿನಿಯಮ ಹೀಗಿದೆ -</verse>
				<verse number="22">ಬೆಂಕಿಯನ್ನು ತಡೆಯುವ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದುವುಗಳನ್ನು ಬೆಂಕಿದಾಟಿಸಿ ಶುದ್ಧಿಮಾಡಬೇಕು.</verse>
				<verse number="23">ಅವುಗಳನ್ನು, ಹೊಲೆ ಹೋಗಲಾಡಿಸುವ ನೀರಿನಿಂದಲೂ ಶುದ್ಧಮಾಡಬೇಕು. ಬೆಂಕಿಯನ್ನು ತಡೆಯಲಾರದ ವಸ್ತುಗಳನ್ನು ನೀರಿನಿಂದ ತೊಳೆದು ಶುದ್ಧಮಾಡಬೇಕು.</verse>
				<verse number="24">ಏಳನೆಯ ದಿನದಲ್ಲಿ ನಿಮ್ಮ ಬಟ್ಟೆಗಳನ್ನು ಒಗೆದುಕೊಂಡ ನಂತರ ಶುದ್ಧರಾಗುವಿರಿ. ಆ ಬಳಿಕ ನೀವು ಪಾಳೆಯದೊಳಗೆ ಬರಬಹುದು.”</verse>
				<verse number="25">ಸರ್ವೇಶ್ವರ ಮೋಶೆಗೆ:</verse>
				<verse number="26">“ನೀನು, ಮಹಾಯಾಜಕ ಎಲ್ಲಾಜಾರನು ಮತ್ತು ಕುಲನಾಯಕರು ಸೈನಿಕರ ಕೈಗೆ ಸಿಕ್ಕಿರುವ ಸೆರೆಯಾಳುಗಳನ್ನೂ ಪಶುಪ್ರಾಣಿಗಳನ್ನೂ ಲೆಕ್ಕಮಾಡಿ ಒಟ್ಟು ಎಷ್ಟೆಂದು ತಿಳಿದುಕೊಳ್ಳಿ.</verse>
				<verse number="27">ಅದನ್ನು ಎರಡು ಭಾಗಮಾಡಿ ಯುದ್ಧಕ್ಕೆ ಹೋಗಿದ್ದ ಸೈನಿಕರಿಗೆ ಅರ್ಧವನ್ನೂ ಮಿಕ್ಕ ಸಮಾಜದವರಿಗೆ ಅರ್ಧವನ್ನೂ ಹಂಚಿಕೊಡಿ.</verse>
				<verse number="28">ಯುದ್ಧಕ್ಕೆ ಹೋಗಿದ್ದ ಸೈನಿಕರಿಗೆ ಬರುವ ಭಾಗದಿಂದ ಸೆರೆಯಾಳು, ದನ, ಕತ್ತೆ, ಆಡು, ಕುರಿ</verse>
				<verse number="29">ಇವುಗಳಲ್ಲಿ ಐನೂರರಲ್ಲಿ ಒಂದರ ಮೇರೆಗೆ ಸರ್ವೇಶ್ವರನಿಗೋಸ್ಕರ ಕಪ್ಪವನ್ನು ತೆಗೆದುಕೊಳ್ಳಿ. ಇದನ್ನು ಪ್ರತ್ಯೇಕಿಸಿ ಮಹಾಯಾಜಕ ಎಲ್ಲಾಜಾರನಿಗೆ ಒಪ್ಪಿಸಿರಿ.</verse>
				<verse number="30">ಮಿಕ್ಕ ಇಸ್ರಯೇಲರಿಗೆ ಬರುವ ಭಾಗದಿಂದ ಸೆರೆಯಾಳು, ದನ, ಕತ್ತೆ, ಆಡು, ಕುರಿ ಇವುಗಳಲ್ಲಿ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಸರ್ವೇಶ್ವರನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಡಿ,” ಎಂದು ಆಜ್ಞಾಪಿಸಿದರು.</verse>
				<verse number="31">ಸರ್ವೇಶ್ವರನ ಅಪ್ಪಣೆಯಂತೆಯೇ ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರನು ಮಾಡಿದರು.</verse>
				<verse number="32">ಸೈನಿಕರು ತಂದ ಸುಲಿಗೆಯಲ್ಲಿ ಹಂಚಿಕೊಳ್ಳಲು ಉಳಿದುದರ ವಿವರ ಇದು: ಆಡುಕುರಿಗಳೂ 675,000;</verse>
				<verse number="33">ದನಕರುಗಳು 72,000;</verse>
				<verse number="34">ಕತ್ತೆಗಳು 61,000;</verse>
				<verse number="35">ಕನ್ಯೆಯರು 32,000;</verse>
				<verse number="36">ಯುದ್ಧಕ್ಕೆ ಹೋಗಿದ್ದ ಸೈನಿಕರಿಗೆ ದೊರಕಿದ ಅರ್ಧಭಾಗ ಆಗಿರುವ 337,500 ಆಡುಕುರಿಗಳಲ್ಲಿ</verse>
				<verse number="37">675 ಆಡುಕುರಿಗಳು ಸರ್ವೇಶ್ವರನಿಗೆ ಬಂದ ಕಪ್ಪ.</verse>
				<verse number="38">ಹಾಗೆಯೇ ಅವರಿಗೆ ದೊರಕಿದ 36,000 ದನಕರುಗಳಲ್ಲಿ 72 ದನಕರುಗಳು,</verse>
				<verse number="39">30,500 ಕತ್ತೆಗಳಲ್ಲಿ 61 ಕತ್ತೆಗಳು,</verse>
				<verse number="40">16,000 ಕನ್ಯೆಯರಲ್ಲಿ 32 ಮಂದಿ ಸರ್ವೇಶ್ವರನಿಗೆ ಬಂದ ಕಪ್ಪ.</verse>
				<verse number="41">ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಈ ಕಪ್ಪವನ್ನು ಸರ್ವೇಶ್ವರನಿಗೆ ಪ್ರತ್ಯೇಕಿಸಿ ಮಹಾಯಾಜಕ ಎಲ್ಲಾಜಾರನಿಗೆ ಒಪ್ಪಿಸಿದನು.</verse>
				<verse number="42">ಸೈನಿಕರು ತಂದ ಸುಲಿಗೆಯಲ್ಲಿ ಮೋಶೆ ಪ್ರತ್ಯೇಕಿಸಿದ ಮಿಕ್ಕ ಅರ್ಧಭಾಗದ ವಿವರ ಇದು:</verse>
				<verse number="43">337,500 ಆಡುಕುರಿಗಳು;</verse>
				<verse number="44">36,000 ದನಕರುಗಳು;</verse>
				<verse number="45">30,500 ಕತ್ತೆಗಳು; 16,000 ಕನ್ಯೆಯರು.</verse>
				<verse number="46">ಇಷ್ಟು ಇಸ್ರಯೇಲ ಸಮಾಜದವರ ಪಾಲಿಗೆ ಬಂದವುಗಳು.</verse>
				<verse number="47">ಇವುಗಳಲ್ಲಿ ಮೋಶೆ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಐವತ್ತರಲ್ಲಿ ಒಂದರ ಮೇರೆಗೆ ತೆಗೆದುಕೊಂಡು ಸರ್ವೇಶ್ವರನ ಗುಡಾರವನ್ನು ನೋಡಿಕೊಳ್ಳುವ ಲೇವಿಯರಿಗೆ ಕೊಟ್ಟನು.</verse>
				<verse number="48">ಸೈನ್ಯದ ಸಹಸ್ರಾಧಿಪತಿಗಳು ಹಾಗು ಶತಾಧಿಪತಿಗಳು ಮೋಶೆ ಬಳಿಗೆ ಬಂದು,</verse>
				<verse number="49">“ನಿಮ್ಮ ದಾಸರಾದ ನಾವು ನಮ್ಮ ಅಧಿಕಾರಕ್ಕೆ ಒಳಪಟ್ಟ ಸೈನಿಕರನ್ನು ಲೆಕ್ಕಿಸಿದಾಗ ಒಬ್ಬನಾದರೂ ಕಡಿಮೆ ಆಗಿಲ್ಲವೆಂದು ಗೊತ್ತಾಯಿತು.</verse>
				<verse number="50">ಸರ್ವೇಶ್ವರ ಸ್ವಾಮಿ ನಮ್ಮ ಪ್ರಾಣಗಳನ್ನು ಕಾಪಾಡಿದ್ದಾರೆ. ಅದಕ್ಕೆ ಈಡಾಗಿ ಅವರಿಗೆ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು, ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗುರ, ಮುರುವು, ಕಂಠಮಾಲೆ, ಮುಂತಾದುವುಗಳನ್ನು ತಂದಿದ್ದೇವೆ,” ಎಂದರು.</verse>
				<verse number="51">ಅವರು ಕೊಟ್ಟ ಆ ಚಿನ್ನದ ಒಡವೆಗಳನ್ನೂ ವಿಚಿತ್ರ ಆಭರಣಗಳನ್ನೂ ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರನು ತೆಗೆದುಕೊಂಡರು.</verse>
				<verse number="52">ಸಹಸ್ರಾಧಿಪತಿಗಳು ಹಾಗು ಶತಾಧಿಪತಿಗಳು ಸರ್ವೇಶ್ವರನಿಗೆ ಹೀಗೆ ಪ್ರತ್ಯೇಕಿಸಿ ಸಮರ್ಪಿಸಿದ ಕಾಣಿಕೆಯ ಒಟ್ಟು ತೂಕ 16,750 ಶೆಕೆಲ್ ಗಳು.</verse>
				<verse number="53">ಪ್ರತಿಯೊಬ್ಬ ಸೈನಿಕನೂ ಸ್ವಂತಕ್ಕಾಗಿ ಲೂಟಿಯನ್ನು ಇಟ್ಟುಕೊಂಡಿದ್ದನು.</verse>
				<verse number="54">ಆದರೆ ಸಹಸ್ರಾಧಿಪತಿಗಳು ಮತ್ತು ಶತಾಧಿಪತಿಗಳು ಕೊಟ್ಟ ಚಿನ್ನವನ್ನು ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರನು ಸ್ವೀಕರಿಸಿ ಅದನ್ನು ಇಸ್ರಯೇಲರಿಗೋಸ್ಕರ ಸ್ಮರಣಾರ್ಥವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದೊಳಗಿಟ್ಟರು.</verse>
			</chapter>
			<chapter number="32">
				<verse number="1">ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಾಗಿದ್ದವು. ಯಗ್ಜೇರ್ ಹಾಗು ಗಿಲ್ಯಾದ್ ಪ್ರದೇಶಗಳನ್ನು ದನಕುರಿಗಳ ಮೇವಿಗೆ ತಕ್ಕ ಸ್ಥಳ ಎಂದು ಅವರು ನೋಡಿ ತಿಳಿದುಕೊಂಡರು.</verse>
				<verse number="2">ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರ್ ಇವರ ಬಳಿಗೂ ಸಮಾಜದ ಮುಖಂಡರ ಬಳಿಗೂ ಅವರು ಬಂದು,</verse>
				<verse number="3">ಸರ್ವೇಶ್ವರ ಸ್ವಾಮಿ ಇಸ್ರಯೇಲರಿಗೆ ಅಧೀನಪಡಿಸಿರುವ ಈ ಪ್ರದೇಶ, ಅಂದರೆ ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬಿಯೋನ್ ಎಂಬ ಪಟ್ಟಣಗಳನ್ನು ಒಳಗೊಂಡ ಈ ಪ್ರದೇಶ ದನಕುರಿಗಳ ಮೇವಿಗೆ ಹುಲುಸಾದ ಪ್ರದೇಶ.</verse>
				<verse number="4">ನಿಮ್ಮ ದಾಸರಾದ ನಮಗೆ ಬಹಳ ದನಕುರಿಗಳಿವೆ.</verse>
				<verse number="5">ಆದಕಾರಣ ದಾಸರಾದ ನಮ್ಮ ಮೇಲೆ ದಯವಿಟ್ಟು ನಮ್ಮನ್ನು ಜೋರ್ಡನ್ ನದಿಯ ಆಚೆಗೆ ಬರಮಾಡಬೇಡಿ. ಈ ಪ್ರದೇಶವನ್ನೇ ಸೊತ್ತಾಗಿ ಕೊಡಿ,” ಎಂದು ಕೇಳಿಕೊಂಡರು.</verse>
				<verse number="6">ಅವರಿಗೆ ಮೋಶೆ, “ನಿಮ್ಮ ಬಂಧುಬಳಗದವರು ಯುದ್ಧಕ್ಕೆ ಹೊರಡುವಾಗ ನೀವು ಇಲ್ಲೇ ಕೂತಿರಬೇಕೆನ್ನುತ್ತೀರೋ?</verse>
				<verse number="7">ಸರ್ವೇಶ್ವರ ಇಸ್ರಯೇಲರಿಗೆ ಕೊಟ್ಟ ನಾಡಿಗೆ ಅವರು ಹೋಗದಂತೆ ನೀವೇಕೆ ಅಧೈರ್ಯವನ್ನು ಹುಟ್ಟಿಸುತ್ತೀರಿ?</verse>
				<verse number="8">ಆ ನಾಡನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ಪೂರ್ವಜರನ್ನು ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರು.</verse>
				<verse number="9">ಅವರು ಎಷ್ಕೋಲ್ ಕಣಿವೆಗೆ ಬಂದು ಆ ನಾಡನ್ನು ನೋಡಿ ಇಸ್ರಯೇಲರಿಗೆ ಅಧೈರ್ಯವನ್ನು ಹುಟ್ಟಿಸಿದರು. ಆದ್ದರಿಂದ‍ ಇಸ್ರಯೇಲರು ತಮಗೆ ಸರ್ವೇಶ್ವರ ವಾಗ್ದಾನಮಾಡಿದ ನಾಡಿಗೆ ಹೋಗಲೇ ಇಲ್ಲ.</verse>
				<verse number="10">ಆಗ ಸರ್ವೇಶ್ವರ ಕೋಪಗೊಂಡರು.</verse>
				<verse number="11">‘ಈಜಿಪ್ಟ್ ದೇಶದಿಂದ ಹೊರಬಂದ ಈ ಜನರಲ್ಲಿ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಮತ್ತು ನೂನನ ಮಗ ಯೆಹೋಶುವನು ಇವರಿಬ್ಬರೇ ಹೊರತಾಗಿ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದರು.</verse>
				<verse number="12">ಆದ್ದರಿಂದ ಈ ಜನರಲ್ಲಿ ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸಿನವರಲ್ಲಿ ಅವರಿಬ್ಬರೇ ಹೊರತಾಗಿ ಬೇರಾರೂ ಅಬ್ರಹಾಮ್, ಇಸಾಕ್ ಮತ್ತು ಯಕೋಬರಿಗೆ ನಾನು ಪ್ರಮಾಣಪೂರ್ವಕವಾಗಿ ಕೊಟ್ಟ ನಾಡನ್ನು ನೋಡುವುದೇ ಇಲ್ಲ’ ಎಂದು ಖಂಡಿತವಾಗಿ ಹೇಳಿದರು.</verse>
				<verse number="13">ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ತಮ್ಮ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳವರಾಗಿದ್ದ ಆ ಪೀಳಿಗೆಯವರೆಲ್ಲರು ನಾಶವಾಗುವ ತನಕ, ಅಂದರೆ ನಾಲ್ವತ್ತುವರ್ಷ ಕಾಲ, ಇಸ್ರಯೇಲರನ್ನು ಮರುಭೂಮಿಯಲ್ಲೆ ಅಲೆಯುವಂತೆ ಮಾಡಿದರು.</verse>
				<verse number="14">ಈಗ ಈ ದುಷ್ಟ ಪೀಳಿಗೆಗೆ ಸೇರಿದವರಾದ ನೀವು ನಿಮ್ಮ ಪೂರ್ವಜರಿಗೆ ಬದಲಾಗಿ ಬಂದು ಇಸ್ರಯೇಲರ ಮೇಲಿದ್ದ ಸರ್ವೇಶ್ವರನ ಕೋಪಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತಿದ್ದೀರಿ.</verse>
				<verse number="15">ನೀವು ವಿಧೇಯರಾಗಿ ನಡೆಯದೆ ಹೋದರೆ ಸರ್ವೇಶ್ವರ ಈ ಜನರನ್ನು ಇನ್ನೂ ಮರುಭೂಮಿಯಲ್ಲೇ ಇರಿಸುವರು; ಈ ಸಮಸ್ತ ಜನಾಂಗದ ನಾಶಕ್ಕೆ ನೀವೇ ಕಾರಣರು ಆಗುವಿರಿ,” ಎಂದನು.</verse>
				<verse number="16">ಆಗ ಅವರು ಮೋಶೆಯ ಬಳಿಗೆ ಬಂದು, “ಇಲ್ಲಿ ನಮ್ಮ ದನಕುರಿಗಳಿಗೆ ದೊಡ್ಡಿಗಳನ್ನೂ ನಮ್ಮ ಕುಟುಂಬಗಳಿಗೆ ಊರುಗಳನ್ನೂ ಕಟ್ಟಿಕೊಳ್ಳುತ್ತೇವೆ.</verse>
				<verse number="17">ಆದರೆ ನಾವು ಇಸ್ರಯೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವ ತನಕ ಯುದ್ಧಕ್ಕೆ ಸನ್ನದ್ಧರಾಗಿ ಅವರ ಮುಂದೆಯೇ ನಡೆಯುತ್ತೇವೆ. ಅಷ್ಟರಲ್ಲಿ ನಮ್ಮ ಕುಟುಂಬಗಳವರು ಕೋಟೆ ಕಟ್ಟಿದ ಊರುಗಳಲ್ಲಿ ವಾಸಿಸಲಿ. ಏಕೆಂದರೆ ಈ ನಾಡಿನ ನಿವಾಸಿಗಳ ಭಯವಿದೆ.</verse>
				<verse number="18">ಇಸ್ರಯೇಲರು ಎಲ್ಲರು ತಮ್ಮ ತಮ್ಮ ಸೊತ್ತುಗಳನ್ನು ಸ್ವತಂತ್ರಿಸಿಕೊಳ್ಳುವ ಪರ್ಯಂತರ ನಾವು ನಮ್ಮ ಮನೆಗಳಿಗೆ ಹಿಂದಿರುಗುವುದಿಲ್ಲ.</verse>
				<verse number="19">ನಮಗೆ ಜೋರ್ಡನ್ ನದಿಯ ಈಚೆ ಪೂರ್ವ ದಿಕ್ಕಿನಲ್ಲಿ ಸೊತ್ತು ದೊರಕಿದ್ದುದರಿಂದ ನಾವು ನದಿಯ ಆಚೆ ಎಲ್ಲಿಯೂ ಅವರೊಂದಿಗೆ ಸೊತ್ತನ್ನು ಅಪೇಕ್ಷಿಸುವುದಿಲ್ಲ,” ಎಂದರು.</verse>
				<verse number="20">ಅದಕ್ಕೆ ಮೋಶೆ, “ನೀವು ಈ ಮಾತಿನಂತೆ ನಡೆಯುವುದಾದರೆ ನಿಮ್ಮಲ್ಲಿರುವ ಯೋಧರೆಲ್ಲರು ಯುದ್ಧಸನ್ನದ್ಧರಾಗಲಿ.</verse>
				<verse number="21">ಜೋರ್ಡನ್ ನದಿಯ ಆಚೆಗೆ ಹೋಗಿ ಸರ್ವೇಶ್ವರ ತಮ್ಮ ವೈರಿಗಳನ್ನು ಹೊರಡಿಸಿಬಿಟ್ಟು ಆ ನಾಡನ್ನು ಸ್ವಾಧೀನಮಾಡಿಕೊಳ್ಳುವ ತನಕ ಅವರ ಮುಂದೆ ಯುದ್ಧಮಾಡಲಿ.</verse>
				<verse number="22">ತರುವಾಯ ನೀವು ಹಿಂದಿರುಗಿ ಬರಬಹುದು. ಆಗ ಸರ್ವೇಶ್ವರನ ಮುಂದೆ, ಇಸ್ರಯೇಲರ ಮುಂದೆ ನಿರ್ದೋಷಿಗಳಾಗುವಿರಿ, ಮಾತ್ರವಲ್ಲ ಈ ಪ್ರದೇಶ ಸರ್ವೇಶ್ವರನ ಸನ್ನಿಧಿಯಲ್ಲೇ ನಿಮಗೆ ಸೇರಿದ ಸೊತ್ತಾಗುವುದು.</verse>
				<verse number="23">ನೀವು ಹಾಗೇನಾದರೂ ಮಾಡದೆ ಹೋದರೆ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರಾಗುವಿರಿ. ನಿಮ್ಮನ್ನು ದಂಡಿಸುವ ತನಕ ನಿಮ್ಮ ಪಾಪ ನಿಮ್ಮ ಬೆನ್ನತ್ತಿಬರುವುದೆಂದು ತಿಳಿದಿರಿ.</verse>
				<verse number="24">ನಿಮ್ಮ ಕುಟುಂಬಗಳಿಗಾಗಿ ಊರುಗಳನ್ನೂ ನಿಮ್ಮ ದನಕುರಿಗಳಿಗಾಗಿ ದೊಡ್ಡಿಗಳನ್ನೂ ಕಟ್ಟಿಕೊಂಡು ನಿಮ್ಮ ಮಾತಿನಂತೆ ನಡೆದುಕೊಳ್ಳಿ,” ಎಂದನು.</verse>
				<verse number="25">ಅದಕ್ಕೆ ಗಾದ್ಯರು ಹಾಗು ರೂಬೇನ್ಯರು, “ಒಡೆಯಾ, ನಿಮ್ಮ ಅಪ್ಪಣೆಯಂತೆಯೇ ದಾಸರಾದ ನಾವು ಮಾಡುತ್ತೇವೆ.</verse>
				<verse number="26">ನಮ್ಮ ಮಡದಿ ಮಕ್ಕಳೂ ದನಕುರಿಗಳೂ ಇಲ್ಲೇ ಗಿಲ್ಯಾದ್ ನಾಡಿನ ಊರುಗಳಲ್ಲಿರಲಿ.</verse>
				<verse number="27">ನಿಮ್ಮ ದಾಸರಾದ ನಮ್ಮಲ್ಲಿ ಯುದ್ಧಸನ್ನದ್ಧರೆಲ್ಲರು ತಮ್ಮ ಅಪ್ಪಣೆಯ ಮೇರೆಗೆ ಸರ್ವೇಶ್ವರನ ಸಮ್ಮುಖದಲ್ಲೇ ಮುನ್ನಡೆದು, ನದಿಯನ್ನು ದಾಟಿ ಯುದ್ಧಮಾಡುತ್ತೇವೆ,” ಎಂದು ಉತ್ತರಕೊಟ್ಟರು.</verse>
				<verse number="28">ಮೋಶೆ ಅವರ ಬಗ್ಗೆ ಮಹಾಯಾಜಕ ಎಲ್ಲಾಜಾರನಿಗೂ ನೂನನ ಮಗನಾದ ಯೆಹೋಶುವನಿಗೂ ಹಾಗು ಇಸ್ರಯೇಲರ ಕುಲನಾಯಕರಿಗೂ ಹೀಗೆಂದು ಆಜ್ಞೆಮಾಡಿದನು:</verse>
				<verse number="29">“ಗಾದ್ಯರಲ್ಲೂ ರೂಬೇನ್ಯರಲ್ಲೂ ಯುದ್ಧಸನ್ನದ್ಧರಾದವರೆಲ್ಲರು ನಿಮ್ಮೊಡನೆ ಜೋರ್ಡನ್ ನದಿಯನ್ನು ದಾಟಿ ಸರ್ವೇಶ್ವರನ ಸಮ್ಮುಖದಲ್ಲಿ ಯುದ್ಧಮಾಡಿದ್ದೇ ಆದರೆ ಕಾನಾನ್ ನಾಡು ನಿಮ್ಮ ಸ್ವಾಧೀನಕ್ಕೆ ಬಂದಾಗ ನೀವು ಗಿಲ್ಯಾದ್ ಪ್ರದೇಶವನ್ನು ಅವರಿಗೆ ಸೊತ್ತಾಗಿ ಕೊಡಿ.</verse>
				<verse number="30">ಆದರೆ ಅವರು ನಿಮ್ಮೊಡನೆ ಯುದ್ಧಕ್ಕೆ ಹೋಗದಿದ್ದರೆ ಕಾನಾನ್ ನಾಡಿನಲ್ಲೇ ಅವರಿಗೆ ಸೊತ್ತು ಸಿಗಲಿ.”</verse>
				<verse number="31">ಅದಕ್ಕೆ ಗಾದ್ಯರು ಮತ್ತು ರೂಬೇನ್ಯರು ಒಪ್ಪಿಕೊಂಡರು. “ನಿಮ್ಮ ದಾಸರಾದ ನಮಗೆ ಸರ್ವೇಶ್ವರ ಆಜ್ಞಾಪಿಸಿದಂತೆಯೇ ಮಾಡುತ್ತೇವೆ.</verse>
				<verse number="32">ಸರ್ವೇಶ್ವರನ ಸಮ್ಮುಖದಲ್ಲಿ ಯುದ್ಧ ಸನ್ನದ್ಧರಾಗಿ ಕಾನಾನ್ ನಾಡಿಗೆ ಹೊರಡುತ್ತೇವೆ. ಜೋರ್ಡನ್ ನದಿಯ ಈಚೆಯೇ ನಮಗೆ ಆಸ್ತಿ ದೊರಕಬೇಕು,” ಎಂದು ಹೇಳಿದರು.</verse>
				<verse number="33">ಹೀಗೆ ಮೋಶೆ ಗಾದ್ಯರಿಗು, ರೂಬೇನ್ಯರಿಗು, ಹಾಗು ಜೋಸೆಫನ ಮಗನಾದ ಮನಸ್ಸೆಯ ಕುಲದ ಅರ್ಧ ಜನರಿಗು ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನು, ಬಾಷಾನಿನ ಅರಸನಾದ ಓಗನ ರಾಜ್ಯವನ್ನು, ಅವುಗಳ ಎಲ್ಲ ಊರುಗಳನ್ನು ಮತ್ತು ಆ ಊರುಗಳಿಗೆ ಸೇರಿದ ಎಲ್ಲ ಭೂಮಿಗಳನ್ನು ಕೊಟ್ಟನು.</verse>
				<verse number="34">ಗಾದ್ಯರು ದೀಬೋನ್, ಅಟಾರೋತ್, ಅರೋಯೇರ್,</verse>
				<verse number="35">ಅಟ್ರೋತ್ಷೋಫಾನ್, ಯಗ್ಜೇರ್, ಯೊಗ್ಬೆಹಾ, ಬೇತ್ನಿಮಾ,</verse>
				<verse number="36">ಬೇತ್ ಹಾರನ್ ಎಂಬ ಸುತ್ತು ಗೋಡೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು. ತಮ್ಮ ಆಡುಕುರಿಗಳಿಗಾಗಿ ದೊಡ್ಡಿಗಳನ್ನು ಕಟ್ಟಿಕೊಂಡರು.</verse>
				<verse number="37">ರೂಬೇನ್ಯರು ಹೆಷ್ಬೋನ್, ಎಲೆಯಾಲೆ, ಕಿರ್ಯತಯಿಮ್, ಸಿಬ್ಮಾ ಎಂಬ ಊರುಗಳನ್ನು ಹಾಗು</verse>
				<verse number="38">ಬೇರೆ ಹೆಸರಿನಿಂದ ಉಚ್ಚರಿಸತಕ್ಕ ನೆಬೋ, ಬಾಳ್ಮೆಯೋನ್ ಊರುಗಳನ್ನು ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.</verse>
				<verse number="39">ಮನಸ್ಸೆಯ ಮಗನಾದ ಮಾಕೀರನ ವಂಶದವರು ಗಿಲ್ಯಾದ್‍ಗೆ ಹೋಗಿ ಅದನ್ನು ಸ್ವಾಧೀನ ಮಾಡಿಕೊಂಡರು. ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.</verse>
				<verse number="40">ಮೋಶೆ ಗಿಲ್ಯಾದ್ ಪ್ರಾಂತ್ಯವನ್ನು ಮನಸ್ಸೆಯ ಮಗನಾದ ಮಾಕೀರನ ಸಂತತಿಯವರಿಗೆ ಕೊಟ್ಟನು. ಅವರು ಅಲ್ಲೇ ವಾಸಮಾಡಿಕೊಂಡರು.</verse>
				<verse number="41">ಮನಸ್ಸೆಯ ವಂಶದವನಾದ ಯಾಯಿರನು ಯುದ್ಧಕ್ಕೆ ಹೊರಟು ಅಮೋರಿಯರ ಗ್ರಾಮಗಳನ್ನು ಸ್ವಾಧೀನಪಡಿಸಿಕೊಂಡನು. ಅವುಗಳಿಗೆ ಯಾಯಿರನ ಗ್ರಾಮಗಳೆಂದು ಹೆಸರು ಇಟ್ಟನು.</verse>
				<verse number="42">ನೋಬಹನು ಯುದ್ಧಮಾಡಿ ಕೆನಾತ್ ಎಂಬ ಪಟ್ಟಣವನ್ನೂ ಅದಕ್ಕೆ ಸೇರಿದ ಊರುಗಳನ್ನೂ ಜಯಿಸಿದನು. ಆ ಪಟ್ಟಣಕ್ಕೆ ನೋಬಹ ಎಂದು ತನ್ನ ಹೆಸರನ್ನೇ ಕೊಟ್ಟನು.</verse>
			</chapter>
			<chapter number="33">
				<verse number="1">ಮೋಶೆ ಮತ್ತು ಆರೋನರ ಮುಂದಾಳತ್ವದಲ್ಲಿ ಈಜಿಪ್ಟ್ ದೇಶದಿಂದ ಸೈನ್ಯ ಸೈನ್ಯವಾಗಿ ಹೊರಟ ಇಸ್ರಯೇಲರ ಪಯಣದ ವಿವರ:</verse>
				<verse number="2">ಇಸ್ರಯೇಲರು ತಮ್ಮ ಪ್ರಯಾಣಗಳಲ್ಲಿ ತಂಗಿದ್ದ ಸ್ಥಳಗಳ ಹೆಸರುಗಳನ್ನು ಮೋಶೆ ಸರ್ವೇಶ್ವರನ ಅಪ್ಪಣೆಯನ್ನು ಪಡೆದು ಬರೆದಿಟ್ಟನು.</verse>
				<verse number="3">ಮೊದಲನೆಯ ತಿಂಗಳಿನ ಹದಿನೈದನೆಯ ದಿನ, ಅಂದರೆ ಪಾಸ್ಕಹಬ್ಬದ ಮರುದಿನ, ಇಸ್ರಯೇಲರು ಈಜಿಪ್ಟರ ಎದುರಿನಲ್ಲೇ ಅಟ್ಟಹಾಸದಿಂದ ರಮ್ಸೇಸಿನಿಂದ ಹೊರಟರು.</verse>
				<verse number="4">ಆ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ಈಜಿಪ್ಟರ ದೇವತೆಗಳನ್ನು ದಂಡಿಸಿ ಈಜಿಪ್ಟರ ಚೊಚ್ಚಲು ಮಕ್ಕಳನ್ನು ಸಂಹರಿಸಿದ್ದರು. ಆ ಮಕ್ಕಳ ಶವಗಳನ್ನು ಸಮಾಧಿ ಮಾಡಲಾಗುತ್ತಿತ್ತು.</verse>
				<verse number="5">ಇಸ್ರಯೇಲರು ರಮ್ಸೇಸಿನಿಂದ ಹೊರಟು ಸುಕ್ಕೋತಿನಲ್ಲಿ ಇಳಿದುಕೊಂಡರು.</verse>
				<verse number="6">ಸುಕ್ಕೋತಿನಿಂದ ಹೊರಟು ಮರುಭೂಮಿಯ ಅಂಚಿನಲ್ಲಿರುವ ಏತಾಮಿನಲ್ಲಿ ಇಳಿದುಕೊಂಡರು.</verse>
				<verse number="7">ಏತಾಮಿನಿಂದ ಹೊರಟು ಬಾಳ್ಚೆಪೋನಿಗೆ ಎದುರಿಗಿರುವ ಪೀಹಹೀರೋತಿಗೆ ತಿರುಗಿಕೊಂಡು ಮಿಗ್ದೋಲಿನ ಮೂಡಲಲ್ಲಿ ಇಳಿದುಕೊಂಡರು.</verse>
				<verse number="8">ಅಲ್ಲಿಂದ ಹೊರಟು ಸಮುದ್ರದ ಮಧ್ಯದಲ್ಲೇ ನಡೆದು ಮರುಭೂಮಿಗೆ ಬಂದರು. ಏತಾಮಿನ ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಿ ಮಾರಾ ಎಂಬ ಸ್ಥಳದಲ್ಲಿ ಇಳಿದುಕೊಂಡರು.</verse>
				<verse number="9">ಮಾರಾದಿಂದ ಹೊರಟು ಏಲೀಮಿಗೆ ಬಂದರು. ಅಲ್ಲಿ ಹನ್ನೆರಡು ನೀರಿನ ಒರತೆಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದುದರಿಂದ ಅಲ್ಲಿ ಇಳಿದುಕೊಂಡರು.</verse>
				<verse number="10">ಏಲೀಮಿನಿಂದ ಹೊರಟು ಕೆಂಪು ಸಮುದ್ರದ ದಡದಲ್ಲಿ ಇಳಿದುಕೊಂಡರು.</verse>
				<verse number="11">ಅಲ್ಲಿಂದ ಹೊರಟು ಸೀನ್ ಮರುಭೂಮಿಯಲ್ಲೂ,</verse>
				<verse number="12">ಅಲ್ಲಿಂದ ದೊಷ್ಕದಲ್ಲೂ,</verse>
				<verse number="13">ಅನಂತರ ಅಲೂಷಿನಲ್ಲೂ ಇಳಿದುಕೊಂಡರು.</verse>
				<verse number="14">ಅಲೂಷಿನಿಂದ ಹೊರಟು ರೆಫೀದೀಮಿನಲ್ಲಿ ಇಳಿದುಕೊಂಡರು. ಅಲ್ಲಿ ಅವರಿಗೆ ಕುಡಿಯುವುದಕ್ಕೆ ನೀರು ಸಿಕ್ಕಲಿಲ್ಲ.</verse>
				<verse number="15">ರೆಫೀದೀಮಿನಿಂದ ಹೊರಟು ಸೀನಾಯಿ ಮರುಭೂಮಿಯಲ್ಲೂ</verse>
				<verse number="16">ಅಲ್ಲಿಂದ ಹೊರಟು ಕಿಬ್ರೋತ್ ಹತಾವಾದಲ್ಲೂ</verse>
				<verse number="17">ಕಿಬ್ರೋತ್ ಹತಾವಾದಿಂದ ಹಚೆರೋತಿನಲ್ಲೂ</verse>
				<verse number="18">ಹಚೆರೋತಿನಿಂದ ರಿತ್ಮದಲ್ಲೂ</verse>
				<verse number="19">ರಿತ್ಮದಿಂದ ರಿಮ್ಮೋನ್ ಪೆರೆಚಿನಲ್ಲೂ</verse>
				<verse number="20">ರಿಮ್ಮೋನ್ ಪೆರೆಚಿನಿಂದ ಲಿಬ್ನದಲ್ಲೂ</verse>
				<verse number="21">ಲಿಬ್ನದಿಂದ ರಿಸ್ಸದಲ್ಲೂ</verse>
				<verse number="22">ರಿಸ್ಸದಿಂದ ಕೆಹೇಲಾತದಲ್ಲೂ</verse>
				<verse number="23">ಕೆಹೇಲಾತದಿಂದ ಶೆಫೆರ್ ಬೆಟ್ಟದಲ್ಲೂ</verse>
				<verse number="24">ಅಲ್ಲಿಂದ ಹರಾದದಲ್ಲೂ</verse>
				<verse number="25">ಹರಾದದಿಂದ ಹೊರಟು ಮಖೇಲೋತಿನಲ್ಲೂ ಇಳಿದುಕೊಂಡರು.</verse>
				<verse number="26">ಮಖೇಲೋತಿನಿಂದ ಹೊರಟು ತಹತಿನಲ್ಲೂ</verse>
				<verse number="27">ತಹತಿನಿಂದ ತೆರಹದಲ್ಲೂ</verse>
				<verse number="28">ತೆರಹದಿಂದ ಮಿತ್ಕದಲ್ಲೂ</verse>
				<verse number="29">ಮಿತ್ಕದಿಂದ ಹಷ್ಮೋನದಲ್ಲೂ</verse>
				<verse number="30">ಹಷ್ಮೋನದಿಂದ ಮೋಸೇರೋತಿನಲ್ಲೂ</verse>
				<verse number="31">ಮೋಸೇರೋತಿನಿಂದ ಬೆನೇಯಾಕಾನಿನಲ್ಲೂ</verse>
				<verse number="32">ಬೆನೇಯಾಕಾನಿನಿಂದ ಹೊರಟು ಹೋರ್ಹಗಿದ್ಗಾದಿನಲ್ಲೂ</verse>
				<verse number="33">ಹೋರ್ಹಗಿದ್ಗಾದಿನಿಂದ ಯೋಟ್ಬಾತದಲ್ಲೂ</verse>
				<verse number="34">ಯೋಟ್ಬಾತದಿಂದ ಅಬ್ರೋನದಲ್ಲೂ</verse>
				<verse number="35">ಅಬ್ರೋನದಿಂದ ಎಚ್ಯೋನ್ ಗೆಬೆರಿನಲ್ಲೂ</verse>
				<verse number="36">ಎಚ್ಯೋನ್ ಗೆಬೆರಿನಿಂದ ಹೊರಟು ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು. ಅದೇ ಕಾದೇಶ್.</verse>
				<verse number="37">ಕಾದೇಶಿನಿಂದ ಹೊರಟು ಎದೋಮ್ಯರ ನಾಡಿನ ಅಂಚಿನಲ್ಲಿರುವ ಹೋರ್ ಬೆಟ್ಟದ ಬಳಿಯಲ್ಲಿ ಇಳಿದುಕೊಂಡರು.</verse>
				<verse number="38">ಮಹಾಯಾಜಕ ಆರೋನನು ಸರ್ವೇಶ್ವರನಿಂದ ಅಪ್ಪಣೆಯನ್ನು ಪಡೆದು ಆ ಹೋರ್ ಬೆಟ್ಟವನ್ನು ಹತ್ತಿ ಅಲ್ಲೇ ಪ್ರಾಣಬಿಟ್ಟನು. ಇಸ್ರಯೇಲರು ಈಜಿಪ್ಟಿನಿಂದ ಹೊರಟ ನಾಲ್ವತ್ತನೆಯ ವರ್ಷದ ಐದನೆಯ ತಿಂಗಳಿನ ಮೊದಲನೆಯ ದಿನ ಅದಾಗಿತ್ತು.</verse>
				<verse number="39">ಆರೋನನು ಅಲ್ಲಿ ಸತ್ತಾಗ ಅವನಿಗೆ ನೂರಿಪ್ಪತ್ತು ವರ್ಷ ವಯಸ್ಸಾಗಿತ್ತು.</verse>
				<verse number="40">ಇಸ್ರಯೇಲರು ಬರುತ್ತಾರೆಂಬ ವಾರ್ತೆ ಕಾನಾನ್ ನಾಡಿನ ದಕ್ಷಿಣಪ್ರಾಂತ್ಯದಲ್ಲಿ ವಾಸ ಆಗಿದ್ದ ಕಾನಾನ್ಯನಾದ ಅರಾದ್ ಪಟ್ಟಣದ ಅರಸನಿಗೆ ಮುಟ್ಟಿತು.</verse>
				<verse number="41">ಇಸ್ರಯೇಲರು ಹೋರ್ ಬೆಟ್ಟದಿಂದ ಹೊರಟು ಚೆಲ್ಮೋನದಲ್ಲಿ ಇಳಿದುಕೊಂಡರು.</verse>
				<verse number="42">ಚೆಲ್ಮೋನದಿಂದ ಪೂನೋನಿನಲ್ಲೂ</verse>
				<verse number="43">ಪೂನೋನಿನಿಂದ ಓಬೋತಿನಲ್ಲೂ</verse>
				<verse number="44">ಓಬೋತಿನಿಂದ ಮೋವಾಬ್ಯರ ಸರಹದ್ದಿನಲ್ಲಿರುವ ಜೋರ್ಡನ್ ನದಿಯ ಆಚೆಯಿರುವ ಇಯ್ಯೀಮಿನಲ್ಲಿ ಇಳಿದುಕೊಂಡರು.</verse>
				<verse number="45">ಇಯ್ಯೀಮಿನಿಂದ ಹೊರಟು ದೀಬೋನ್ ಗಾದಿನಲ್ಲೂ</verse>
				<verse number="46">ದೀಬೋನ್ ಗಾದಿನಿಂದ ಅಲ್ಮೋನ್ ದಿಬ್ಲಾತಯಿಮಿನಲ್ಲೂ</verse>
				<verse number="47">ಅಲ್ಲಿಂದ ಹೊರಟು ಅಬಾರೀಮ್ ಬೆಟ್ಟಗಳಲ್ಲಿರುವ ನೇಬೋವಿನ ಮೂಡಣದಲ್ಲಿ ಇಳಿದುಕೊಂಡರು.</verse>
				<verse number="48">ಅಬಾರೀಮ್ ಬೆಟ್ಟಗಳಿಂದ ಹೊರಟು ಜೆರಿಕೋ ಪಟ್ಟಣದ ಹತ್ತಿರ ಜೋರ್ಡನ್ ನದಿಯ ತೀರದಲ್ಲಿ ಮೋವಾಬ್ಯರ ಮೈದಾನದಲ್ಲಿ ಇಳಿದುಕೊಂಡರು.</verse>
				<verse number="49">ಅವರು ಮೋವಾಬ್ಯರ ಮೈದಾನದಲ್ಲಿ ಬೇತ್ ಯೆಷೀಮೋತಿನಿಂದ ಆಬೇಲ್ ಶಿಟ್ಟೀಮಿನವರೆಗೂ ಜೋರ್ಡನ್ ನದಿಯ ತೀರದಲ್ಲಿ ಇಳಿದುಕೊಂಡರು.</verse>
				<verse number="50">ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದ್ದು ಏನೆಂದರೆ:</verse>
				<verse number="51">“ಇಸ್ರಯೇಲರಿಗೆ ಹೀಗೆಂದು ಆಜ್ಞಾಪಿಸು - ‘ನೀವು ಜೋರ್ಡನ್ ನದಿಯನ್ನು ದಾಟಿ ಕಾನಾನ್ ನಾಡನ್ನು ಸೇರಿದಾಗ</verse>
				<verse number="52">ಆ ನಾಡಿನ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಡಿ. ಅವರ ವಿಚಿತ್ರ ಕಲ್ಲುಗಳನ್ನು ಹಾಗು ಲೋಹವಿಗ್ರಹಗಳನ್ನು ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.</verse>
				<verse number="53">ನಾನು ಆ ನಾಡನ್ನು ನಿಮಗೆ ಸ್ವಂತ ನಾಡಾಗಲೆಂದು ಕೊಟ್ಟಿದ್ದೇನೆ. ಆದ್ದರಿಂದ ಅದನ್ನು ಸ್ವಾಧೀನಮಾಡಿಕೊಂಡು ಅದರಲ್ಲೇ ವಾಸಮಾಡಿ.</verse>
				<verse number="54">ಚೀಟು ಹಾಕಿ ಅದನ್ನು ನಿಮ್ಮ ನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಿ. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಆಸ್ತಿ ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವುದೋ ಅಲ್ಲೇ ಆ ಕುಟುಂಬದ ಸೊತ್ತಿರಬೇಕು. ಒಂದೊಂದು ಕುಲಕ್ಕೆ ಸೇರಿದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.</verse>
				<verse number="55">ನೀವು ಆ ನಾಡಿನ ನಿವಾಸಿಗಳನ್ನು ಹೊರಡಿಸದೆ ಹೋದರೆ ಅವರಲ್ಲಿ ನೀವು ಉಳಿಸಿದವರು ನಿಮಗೆ ಕಣ್ಣುಚುಚ್ಚುವ ಮುಳ್ಳುಗಳಂತೆ ಆಗುವರು; ಪಕ್ಕೆ ತಿವಿಯುವ ಶೂಲಗಳಂತೆ ಆಗುವರು; ನೀವು ವಾಸಿಸುವ ನಾಡಿನಲ್ಲಿ ನಿಮಗೆ ಕಂಠಕಪ್ರಾಯರಾಗುವರು.</verse>
				<verse number="56">ಅಲ್ಲದೆ, ನಾನು ಅವರಿಗೆ ಮಾಡಯೋಚಿಸಿದಂತೆ ನಿಮಗೇ ಮಾಡುವೆನು’.”</verse>
			</chapter>
			<chapter number="34">
				<verse number="1">ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದ್ದು ಏನೆಂದರೆ:</verse>
				<verse number="2">“ನೀನು ಇಸ್ರಯೇಲರಿಗೆ ಹೀಗೆಂದು ಆಜ್ಞಾಪಿಸು - ‘ಇಡೀ ಕಾನಾನ್ ನಾಡು ನಿಮಗೆ ಸ್ವಂತ ನಾಡಾಗಿ ದೊರಕುವುದು.</verse>
				<verse number="3">ನೀವು ಅಲ್ಲಿ ಸೇರಿದಾಗ ಎದೋಮ್ಯರ ಸರಹದ್ದಿನ ಬಳಿಯಿರುವ ಚಿನ್ ಮರುಭೂಮಿಯೇ ನಿಮ್ಮ ದಕ್ಷಿಣ ಮೇರೆಯಾಗಿರಬೇಕು. ಆ ಮೇರೆ ಮೂಡಣ ದಿಕ್ಕಿನಲ್ಲಿ ಲವಣಸಮುದ್ರದ ಕೊನೆಯಿಂದ ತೊಡಗುವುದು.</verse>
				<verse number="4">ಅದು ಅಲ್ಲಿಂದ ದಕ್ಷಿಣಕ್ಕೆ ತಿರುಗಿಕೊಂಡು ಅಕ್ರಬ್ಬೀಮ್ ಎಂಬ ಕಣಿವೆಯ ಮಾರ್ಗವಾಗಿ ಚಿನಿಗೆ ಬರುವುದು. ಅದರ ಮೂಲೆ ಕಾದೇಶ್ ಬರ್ನೆಯದ ದಕ್ಷಿಣ ಕಡೆಯಲ್ಲಿರುವುದು. ಅಲ್ಲಿಂದ ಹಚರದ್ದಾರ್, ಆಚ್ಮೋನ್ ಎಂಬ ಊರುಗಳ ಮೇಲೆ</verse>
				<verse number="5">ಈಜಿಪ್ಟ್ ದೇಶದ ಮುಂದೆ ಇರುವ ಹಳ್ಳಕ್ಕೆ ಬಂದು ಸಮುದ್ರದ ದಡದಲ್ಲಿ ಮುಗಿಯುವುದು.</verse>
				<verse number="6">‘ಪಶ್ಚಿಮ ದಿಕ್ಕಿನಲ್ಲಿ ಮಹಾಸಮುದ್ರದ ದಡವೇ ನಿಮ್ಮ ನಾಡಿನ ಮೇರೆಯಾಗಿರುವುದು.</verse>
				<verse number="7">‘ಉತ್ತರ ದಿಕ್ಕಿನ ಮೇರೆಗಾಗಿ ನೀವು ಮಹಾಸಮುದ್ರದಿಂದ ಹೋರ್ ಎಂಬ ಪರ್ವತಕ್ಕೂ</verse>
				<verse number="8">ಆ ಪರ್ವತದಿಂದ ಹಮಾತಿನ ದಾರಿಗೂ ಗುರುತು ಹಾಕಿಕೊಳ್ಳಬೇಕು. ಅದರ ಮೂಲೆ ಚೆದಾದಿನ ಹತ್ತಿರ ಇರುವುದು.</verse>
				<verse number="9">ಆಮೇಲೆ ಅದು ಜಿಫ್ರೋನಿಗೆ ಹೋಗಿ ಹಚೆರೇನಾನಿನ ಬಳಿಯಲ್ಲಿ ಮುಗಿಯುವುದು.</verse>
				<verse number="10">‘ಪೂರ್ವದಿಕ್ಕಿನ ಮೇರೆಗಾಗಿ ಹಚೆರೇನಾನಿನಿ0ದ ಶೆಫಾಮಿಗೆ ಗುರುತು ಹಾಕಬೇಕು.</verse>
				<verse number="11">ಅಲ್ಲಿ0ದ ಅದು ಅಯಿನಿನ ಮೂಡಲಲ್ಲಿರುವ ರಿಬ್ಲಕ್ಕೆ ಬರಬೇಕು.ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್‍ ಸಮುದ್ರದ ಮೂಡಲಲ್ಲಿರುವ ಬೆಟ್ಟಗಳಿಗೆ ಹೋಗಬೇಕು.</verse>
				<verse number="12">ಅದೂ ಅಲ್ಲಿಂದ ಜೋರ್ಡನ್ ನದಿಗೆ ಇಳಿದು, ಅದನ್ನು ಅನುಸರಿಸುತ್ತಾ ಲವಣ ಸಮುದ್ರದ ಬಳಿಯಲ್ಲಿ ಮುಗಿಯಬೇಕು.’ ಇವೇ ನಿಮ್ಮ ನಾಡಿನ ಮೇರೆಗಳು,” ಎಂದರು.</verse>
				<verse number="13">ಅದಕ್ಕನುಸಾರವಾಗಿ ಮೋಶೆ ಇಸ್ರಯೇಲರಿಗೆ, “ನೀವು ಚೀಟುಹಾಕಿ ಹಂಚಿಕೊಳ್ಳಬೇಕೆಂದು ಸರ್ವೇಶ್ವರ ಆಜ್ಞಾಪಿಸಿದ ನಾಡು ಇದೇ. ಒಂಬತ್ತುವರೆ ಕುಲದವರಿಗೆ ಇದನ್ನು ಹಂಚಿಕೊಡಬೇಕು.</verse>
				<verse number="14">ಬೇರೆ ಎರಡುವರೆ ಕುಲಗಳವರು, ಅಂದರೆ ರೂಬೇನ್ಯರ ಕುಟುಂಬಗಳು, ಗಾದ್ಯರ ಕುಟುಂಬಗಳು ಹಾಗು ಮನಸ್ಸೆಕುಲದವರಲ್ಲಿ ಅರ್ಧಜನರು ಜೋರ್ಡನ್ ನದಿಯ ಈಚೆ ಜೆರಿಕೊ ಪಟ್ಟಣಕ್ಕೆ ಪೂರ್ವದಿಕ್ಕಿನಲ್ಲಿ ಸೊತ್ತನ್ನು ಹೊಂದಿದ್ದಾರೆ,” ಎಂದು ಅಪ್ಪಣೆಕೊಟ್ಟನು.</verse>
				<verse number="15"></verse>
				<verse number="16">ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದ್ದು ಏನೆಂದರೆ:</verse>
				<verse number="17">“ಮಹಾಯಾಜಕ ಎಲ್ಲಾಜಾರನು, ನೂನನ ಮಗ ಯೆಹೋಶುವನು</verse>
				<verse number="18">ಹಾಗು ಒಂದೊಂದು ಕುಲದಿಂದ ನೇಮಿಸಲ್ಪಟ್ಟ ಒಬ್ಬ ಕುಲನಾಯಕನು ಇವರೇ ಕಾನಾನ್‍ ನಾಡಿನಲ್ಲಿ ನಿಮ್ಮ ನಿಮ್ಮ ಸೊತ್ತುಗಳನ್ನು ಹಂಚಿಕೊಡಬೇಕಾದವರು.</verse>
				<verse number="19">ಆಯಾ ಕುಲದಿಂದ ನೀವು ನೇಮಿಸಬೇಕಾದವರು ಇವರು: ಯೆಹೂದ ಕುಲದಿಂದ ಯೆಫುನ್ನೆಯ ಮಗ ಕಾಲೇಬ್,</verse>
				<verse number="20">ಸಿಮೆಯೋನ್ ಕುಲದಿಂದ ಅಮ್ಮೀಹೂದನ ಮಗ ಶೆಮೂವೇಲ್,</verse>
				<verse number="21">ಬೆನ್ಯಾಮೀನ್ ಕುಲದಿಂದ ಕಿಸ್ಲೋನನ ಮಗ ಎಲೀದಾದ್,</verse>
				<verse number="22">ದಾನ್ ಕುಲದಿಂದ ಯೊಗ್ಲೀಯ ಮಗ ಬುಕ್ಕೀ ನಾಯಕ,</verse>
				<verse number="23">ಜೋಸೆಫನ ವಂಶದವರಲ್ಲಿ ಮನಸ್ಸೆ ಕುಲದಿಂದ ಏಫೋದನ ಮಗ ಹನ್ನೀಯೇಲ್ ನಾಯಕ,</verse>
				<verse number="24">ಎಫ್ರಯಿಮ್ ಕುಲದಿಂದ ಶಿಫ್ಟಾನನ ಮಗ ಕೆಮೂವೇಲ್ ನಾಯಕ,</verse>
				<verse number="25">ಜೆಬುಲೂನ್ ಕುಲದಿಂದ ಪರ್ನಾಕನ ಮಗ ಎಲೀಚಾಫನ್ ನಾಯಕ,</verse>
				<verse number="26">ಇಸ್ಸಾಕಾರ್ ಕುಲದಿಂದ ಅಜ್ಜಾನನ ಮಗ ಪಲ್ಟಿಯೇಲ್ ನಾಯಕ,</verse>
				<verse number="27">ಆಶೇರ್ ಕುಲದಿಂದ ಶೆಲೋಮಿಯ ಮಗ ಅಹೀಹೂದ್ ನಾಯಕ,</verse>
				<verse number="28">ನಫ್ತಾಲಿ ಕುಲದಿಂದ ಅಮ್ಮೀಹೂದನ ಮಗ ಪೆದಹೇಲ್ ನಾಯಕ.”</verse>
				<verse number="29">ಕಾನಾನ್ ನಾಡಿನಲ್ಲಿ ಇಸ್ರಯೇಲರಿಗೆ ಸೊತ್ತನ್ನು ಹಂಚಿಕೊಡುವುದಕ್ಕೆ ಸರ್ವೇಶ್ವರ ಇವರೆಲ್ಲರನ್ನು ನೇಮಿಸಿದರು.</verse>
			</chapter>
			<chapter number="35">
				<verse number="1">ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ನಗರದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದ್ದೇನೆಂದರೆ -</verse>
				<verse number="2">“ಇಸ್ರಯೇಲರು ತಾವು ಹೊಂದುವ ಸೊತ್ತಿನಲ್ಲಿ ಕೆಲವು ಊರುಗಳನ್ನು ಹಾಗು ಆ ಊರಿನ ಸುತ್ತಲಿನ ಭೂಮಿಯನ್ನು ಲೇವಿಯರಿಗೆ ನಿವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು.</verse>
				<verse number="3">ಆ ಊರುಗಳು ಲೇವಿಯರ ನಿವಾಸಕ್ಕೆ ಆಗುವುದು; ಅವುಗಳ ಸುತ್ತಲಿನ ಭೂಮಿಗಳು ಅವರ ದನಕುರಿ, ಪ್ರಾಣಿಪಶುಗಳ ಪ್ರಯೋಜನಕ್ಕಾಗುವುದು.</verse>
				<verse number="4">ಲೇವಿಯರಿಗೆ ನೀವು ಕೊಡುವ ಊರುಗಳ ಸುತ್ತಲಿನ ಭೂಮಿ ಊರಿನ ಗೋಡೆಯಿಂದ ನಾಲ್ಕು ಕಡೆಗೂ ಸಾವಿರ ಮೊಳದಷ್ಟು ವಿಸ್ತಾರವಾಗಿರಲಿ.</verse>
				<verse number="5">“ಊರಿನ ಹೊರಗಡೆ ನಾಲ್ಕು ದಿಕ್ಕುಗಳಲ್ಲೂ ಎರಡೆರಡು ಸಾವಿರ ಮೊಳಗಳಷ್ಟು ದೂರದಲ್ಲಿ ಎಲ್ಲೆಗಳನ್ನು ಗೊತ್ತುಮಾಡಬೇಕು. ಆ ಭೂಮಿಯ ನಡುವೆ ಊರಿರಬೇಕು. ಮಿಕ್ಕದ್ದು ಹುಲ್ಲುಗಾವಲಾಗಿರಬೇಕು.</verse>
				<verse number="6">ಮನುಷ್ಯಹತ್ಯೆ ಮಾಡಿದವರು ಆಶ್ರಯಕ್ಕಾಗಿ ಓಡಿಹೋಗಲು ನೀವು ನೇಮಿಸುವ ಆರು ಆಶ್ರಯನಗರಗಳನ್ನೂ ಬೇರೆ ನಾಲ್ವತ್ತೆರಡು ಪಟ್ಟಣಗಳನ್ನೂ, ಹೀಗೆ ನಾಲ್ವತ್ತೆಂಟು ಊರುಗಳನ್ನೂ</verse>
				<verse number="7">ಇವುಗಳ ಸುತ್ತಲಿನ ಭೂಮಿಯನ್ನೂ ಲೇವಿಯರಿಗೆ ಕೊಡಬೇಕು.</verse>
				<verse number="8">ಇಸ್ರಯೇಲರ ಸೊತ್ತಿನಲ್ಲಿ ಆಯಾ ಕುಲದ ಸೊತ್ತಿನ ಅಳತೆಗೆ ತಕ್ಕಹಾಗೆ, ಅಂದರೆ ಹೆಚ್ಚು ಉಳ್ಳವರಿಂದ ಹೆಚ್ಚಾಗಿಯೂ ಕಡಿಮೆ ಉಳ್ಳವರಿಂದ ಕಡಿಮೆಯಾಗಿಯೂ ಲೇವಿಯರಿಗೆ ಊರುಗಳನ್ನು ಕೊಡಿಸಬೇಕು.”</verse>
				<verse number="9">ಸರ್ವೇಶ್ವರ ಮೋಶೆಗೆ ಹೇಳಿದ್ದು ಇದು:</verse>
				<verse number="10">“ನೀನು ಇಸ್ರಯೇಲರಿಗೆ ಹೀಗೆಂದು ಆಜ್ಞಾಪಿಸು - ನೀವು ಜೋರ್ಡನ್ ನದಿಯನ್ನು ದಾಟಿ ಕಾನಾನ್ ನಾಡನ್ನು ಸೇರಿದ ನಂತರ</verse>
				<verse number="11">ಆಶ್ರಯಧಾಮಗಳಿಗಾಗಿ ಪಟ್ಟಣಗಳನ್ನು ನಿಗದಿಮಾಡಿರಿ. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.</verse>
				<verse number="12">ಅಂಥವನು ಸಭೆಯವರಿಂದ ತೀರ್ಪುಹೊಂದುವುದಕ್ಕಿಂತ ಮೊದಲೇ ಹತನಾದವನ ಸಮೀಪ ಬಂಧುವಿನಿಂದ ಸಾಯದಂತೆ ಈ ಆಶ್ರಯಧಾಮಗಳು ನಿಮ್ಮಲ್ಲಿ ಇರಬೇಕು.</verse>
				<verse number="13">ಹೀಗೆ ಆಶ್ರಯಧಾಮಗಳಾಗಿರಲು ಜೋರ್ಡನ್ ನದಿಯ ಈಚೆಕಡೆ</verse>
				<verse number="14">ಮೂರು ಕಾನಾನ್ ನಾಡಿನಲ್ಲಿ ಮೂರು ಹೀಗೆ ಆರು ಪಟ್ಟಣಗಳನ್ನು ನಿಗದಿಮಾಡಬೇಕು.</verse>
				<verse number="15">ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಇಸ್ರಯೇಲನಾಗಿರಲಿ, ಪರದೇಶದವನಾಗಿರಲಿ ಅಥವಾ ನಿಮ್ಮ ಮಧ್ಯೆ ವಾಸಿಸುವವನಾಗಿರಲಿ, ಆ ಆರು ಪಟ್ಟಣಗಳೊಳಗೆ ಒಂದಕ್ಕೆ ಓಡಿಹೋಗಿ ಆಶ್ರಯಪಡೆಯಲಿ.</verse>
				<verse number="16">“ಆದರೆ ಒಬ್ಬನು ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅಂಥವನು ನರಹತ್ಯ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನಿಗೆ ಮರಣಶಿಕ್ಷೆಯಾಗಬೇಕು.</verse>
				<verse number="17">ಒಬ್ಬನನ್ನು ಕೊಲ್ಲುವಷ್ಟು ದೊಡ್ಡ ಕಲ್ಲಿನಿಂದ ಮತ್ತೊಬ್ಬನನ್ನೂ ಹೊಡೆದುಕೊಂದರೆ ಅವನೂ ನರಹತ್ಯಗಾರನೇ; ಅಂಥವನಿಗೂ ಮರಣಶಿಕ್ಷೆಯಾಗಬೇಕು.</verse>
				<verse number="18">ಒಬ್ಬನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧದಿಂದ ಮತ್ತೊಬ್ಬನನ್ನು ಹೊಡೆದುಕೊಂದರೆ ಅವನೂ ನರಹತ್ಯಗಾರನೇ. ಅಂಥವನಿಗೂ ಮರಣಶಿಕ್ಷೆಯಾಗಬೇಕು.</verse>
				<verse number="19">ನರಹತ್ಯ ಮಾಡಿದವನನ್ನು ಕಂಡೊಡನೆ ಕೊಲ್ಲಬೇಕಾದವನು ಹತನಾದವನ ಸಮೀಪ ಬಂಧುವೇ.</verse>
				<verse number="20">ಒಬ್ಬನು ಮತ್ತೊಬ್ಬನನ್ನು ಹಗೆಮಾಡಿ ನೂಕುವುದರಿಂದಾಗಲಿ, ಸಮಯ ನೋಡಿ ಅವನ ಮೇಲೆ ಏನನ್ನಾದರೂ ಎಸೆಯುವುದರಿಂದಾಗಲಿ,</verse>
				<verse number="21">ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ ಅವನು ಕೂಡ ನರಹತ್ಯಗಾರನೆ. ಅಂಥವನಿಗೂ ಮರಣಶಿಕ್ಷೆಯಾಗಬೇಕು. ಹತನಾದವನ ಸಮೀಪಬಂಧು ಅವನನ್ನು ಕಂಡೊಡನೆ ಕೊಲ್ಲಲಿ.</verse>
				<verse number="22">“ಒಬ್ಬನು ಯಾವ ದ್ವೇಷವೂ ಇಲ್ಲದೆ, ಅಕಸ್ಮಾತ್ತಾಗಿ ನೂಕುವುದರಿಂದಾಗಲಿ, ಹೊಂಚು ಕಾಯದೆ ಏನನ್ನಾದರೂ ಎಸೆಯುವುದರಿಂದಾಗಲಿ,</verse>
				<verse number="23">ಕೊಲ್ಲುವಷ್ಟು ದೊಡ್ಡಕಲ್ಲನ್ನು ತಿಳಿಯದೆ ಬೀಳಿಸುವುದರಿಂದಾಗಲಿ ಮತ್ತೊಬ್ಬನು ಸತ್ತರೆ ಅವನು ಆ ಮನುಷ್ಯನಿಗೆ ವೈರಿಯಾಗಿದ್ದನೆ? ಹಾನಿಮಾಡಬೇಕೆಂಬ ಅಭಿಪ್ರಾಯ ಅವನದಾಗಿತ್ತೆ? ಎಂದು ವಿಚಾರಿಸಬೇಕು.</verse>
				<verse number="24">ಹಾಗಿಲ್ಲದ ಪಕ್ಷದಲ್ಲಿ ಸಭೆಯವರು ಹತ್ಯ ಮಾಡಿದವನಿಗೂ ಹತವಾದವನ ಸಮೀಪಬಂಧುವಿಗೂ ಈ ವಿಚಾರಗಳಿಗನುಸಾರ ನ್ಯಾಯ ತೀರಿಸಬೇಕು; ಹತ್ಯಮಾಡಿದವನನ್ನು ಆ ಸಮೀಪಬಂಧುವಿನ ಕೈಯಿಂದ ತಪ್ಪಿಸಬೇಕು.</verse>
				<verse number="25">ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರುಗಿ ಸೇರಿಸಬೇಕು. ಪಟ್ಟಾಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.</verse>
				<verse number="26">“ಆ ಹತ್ಯ ಮಾಡಿದವನು ಎಂದಾದರು ತಾನು ಓಡಿಹೋಗಿದ್ದ ಆಶ್ರಯ ನಗರದ ಮೇರೆಗೆ ಹೊರಗೆ ಹೋಗಿದ್ದು</verse>
				<verse number="27">ಹತವಾದವನ ಸಮೀಪ ಬಂಧು ಅವನನ್ನು ಕಂಡು ಕೊಂದುಹಾಕಿದರೆ ಕೊಲೆಪಾತಕನಾಗುವುದಿಲ್ಲ.</verse>
				<verse number="28">ಏಕೆಂದರೆ ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯನಗರದೊಳಗೇ ಇರಬೇಕಾಗಿತ್ತು. ಮಹಾಯಾಜಕನು ತೀರಿಹೋದ ನಂತರ ಅವನು ತನ್ನ ಆಸ್ತಿಪಾಸ್ತಿಯಿರುವ ಸ್ಥಳಕ್ಕೆ ಹೋಗಬಹುದು.</verse>
				<verse number="29">ನೀವು ಮತ್ತು ನಿಮ್ಮ ಸಂತತಿಯವರು ಈ ವಿಧಿನಿಯಮಗಳಿಗನುಸಾರ ನಿಮ್ಮ ನಿವಾಸಗಳಲ್ಲೆಲ್ಲ ನ್ಯಾಯ ತೀರಿಸಬೇಕು.</verse>
				<verse number="30">“ಒಬ್ಬನು ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡೇ ಅವನಿಗೆ ಮರಣಶಿಕ್ಷೆ ವಿಧಿಸಬೇಕು. ಒಬ್ಬನೇ ಒಬ್ಬ ಸಾಕ್ಷಿ ಮಾತ್ರ ಇದ್ದರೆ ಮರಣಶಿಕ್ಷೆಯನ್ನು ವಿಧಿಸಕೂಡದು.</verse>
				<verse number="31">ಮರಣಶಿಕ್ಷೆಗೆ ಪಾತ್ರನಾದ ಕೊಲೆಗಡುಕನನ್ನು ಉಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಕೂಡದು. ಅವನಿಗೆ ಮರಣಶಿಕ್ಷೆ ಆಗಲೇಬೇಕು.</verse>
				<verse number="32">ಆಶ್ರಯನಗರಕ್ಕೆ ಓಡಿಹೋದವನಿಂದ ನೀವು ಹಣವನ್ನು ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ಸ್ವಂತ ಊರಿಗೆ ಹೋಗಬಿಡಕೂಡದು.</verse>
				<verse number="33">“ನೀವು ಈ ಪ್ರಕಾರ ನಡೆದುಕೊಂಡರೆ ನಿಮ್ಮ ನಾಡು ಅಪವಿತ್ರವಾಗುವುದಿಲ್ಲ. ರಕ್ತಪಾತವು ನಾಡನ್ನು ಅಪವಿತ್ರಗೊಳಿಸುತ್ತದೆ. ಅದಕ್ಕೆ ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.</verse>
				<verse number="34">ನೀವು ವಾಸಮಾಡುವ ನಾಡನ್ನು ಅಪವಿತ್ರ ಮಾಡಬೇಡಿ. ಸರ್ವೇಶ್ವರನೆಂಬ ನಾನೇ ಇಸ್ರಯೇಲರ ನಡುವೆ ಆ ನಾಡಿನಲ್ಲಿ ವಾಸಿಸುತ್ತೇನೆ.”</verse>
			</chapter>
			<chapter number="36">
				<verse number="1">ಜೋಸೆಫನ ವಂಶದವರೊಳಗೆ ಮನಸ್ಸೆಯ ಮೊಮ್ಮಗನೂ ಮಾಕೀರನ ಮಗನೂ ಆಗಿದ್ದ ಗಿಲ್ಯಾದನ ಸಂತತಿಯವರ ಮುಖಂಡರು ಮೋಶೆಯ ಹಾಗು ಇಸ್ರಯೇಲ್ ಕುಲನಾಯಕರ ಬಳಿಗೆ ಬಂದರು.</verse>
				<verse number="2">“ಚೀಟುಹಾಕಿ ನಾಡನ್ನು ಇಸ್ರಯೇಲರಿಗೆ ಹಂಚಿಕೊಡಬೇಕೆಂದು ಸರ್ವೇಶ್ವರ ಸ್ವಾಮಿ ಒಡೆಯರಾದ ತಮಗೆ ಆಜ್ಞಾಪಿಸಿದರು. ತರುವಾಯ ನಮ್ಮ ಸ್ವಕುಲದವನಾದ ಚಲ್ಪಹಾದನಿಗೆ ಬರತಕ್ಕ ಸೊತ್ತನ್ನು ಅವನ ಹೆಣ್ಣು ಮಕ್ಕಳಿಗೆ ಕೊಡಬೇಕೆಂದು ಅಪ್ಪಣೆ ಮಾಡಿದರು.</verse>
				<verse number="3">ಹೀಗಿರಲು ಆ ಹೆಣ್ಣುಮಕ್ಕಳು ಇಸ್ರಯೇಲರ ಬೇರೆ ಕುಲದವರಿಗೆ ಮದುವೆಯಾದರೆ ಅವರು ಸೇರಿಕೊಳ್ಳುವ ಕುಲಕ್ಕೆ ಹೋಗುತ್ತದೆ. ಇದರಿಂದ ನಮ್ಮ ಸೊತ್ತಿಗೆ ನಷ್ಟ ಉಂಟಾಗುತ್ತದೆ.</verse>
				<verse number="4">ಇಸ್ರಯೇಲರ ಜೂಬಿಲಿ ವರ್ಷವು ಬಂದಾಗ ಅವರ ಸೊತ್ತು ಅವರು ಸೇರಿಕೊಳ್ಳುವ ಕುಲದ ಸೊತ್ತಿಗೆ ಸೇರಿಕೊಳ್ಳುತ್ತದೆ; ನಮ್ಮ ಕುಲದ ಸೊತ್ತಿನಿಂದ ವರ್ಗಾಯಿಸಲ್ಪಡುತ್ತದೆ,” ಎಂದು ಮೊರೆಯಿಟ್ಟರು.</verse>
				<verse number="5">ಆಗ ಮೋಶೆ ಸರ್ವೇಶ್ವರನಿಂದ ಅಪ್ಪಣೆಯನ್ನು ಹೊಂದಿ ಇಸ್ರಯೇಲರಿಗೆ, “ಜೋಸೆಫನ ಕುಲದವರು ಹೇಳುವ ಮಾತು ನ್ಯಾಯವಾದುದು.</verse>
				<verse number="6">ಆದಕಾರಣ ಚಲ್ಪಹಾದನ ಹೆಣ್ಣುಮಕ್ಕಳು ತಮ್ಮ ಕುಲದ ಕುಟುಂಬಗಳಲ್ಲಿ ಮಾತ್ರವೇ ತಮಗೆ ಇಷ್ಟಬಂದವರನ್ನು ಮದುವೆಮಾಡಿಕೊಳ್ಳಬೇಕೆಂದು ಸರ್ವೇಶ್ವರ ಅಪ್ಪಣೆಮಾಡಿದ್ದಾರೆ.</verse>
				<verse number="7">ಇಸ್ರಯೇಲರ ಯಾವ ಸೊತ್ತೂ ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗಬಾರದು. ಇಸ್ರಯೇಲರೆಲ್ಲರು ತಮ್ಮ ತಮ್ಮ ಕುಲಗಳ ಸೊತ್ತನ್ನು ತಾವೇ ಹೊಂದಿರಬೇಕು.</verse>
				<verse number="8">ಇದಕ್ಕಾಗಿ ಇಸ್ರಯೇಲರಲ್ಲಿ ಸೊತ್ತನ್ನು ಹೊಂದಿದ ಹೆಣ್ಣುಮಕ್ಕಳು ಸ್ವಕುಲದಲ್ಲಿ ಮದುವೆಮಾಡಿಕೊಳ್ಳಬೇಕು.</verse>
				<verse number="9">ಹೀಗೆ ಯಾವ ಸೊತ್ತು ಒಂದು ಕುಲದಿಂದ ಬೇರೊಂದು ಕುಲಕ್ಕೆ ಹೋಗದೆ ಇಸ್ರಯೇಲರ ಪ್ರತಿಯೊಂದು ಕುಲವೂ ತನ್ನ ಸೊತ್ತನ್ನು ಹೊಂದಿರುತ್ತದೆ,” ಎಂದು ಆಜ್ಞಾಪಿಸಿದನು.</verse>
				<verse number="10">“ಚಲ್ಪಹಾದನ ಹೆಣ್ಣುಮಕ್ಕಳಾದ ಮಹ್ಲಾ, ತಿರ್ಚಾ, ಹೋಗ್ಲಾ, ಮಿಲ್ಕಾ ಹಾಗು ನೋವಾ ಎಂಬವರು ಸರ್ವೇಶ್ವರನ ಆಜ್ಞಾನುಸಾರ ತಂದೆಯ ಅಣ್ಣತಮ್ಮಂದಿರ ಮಕ್ಕಳನ್ನು ಮದುವೆಮಾಡಿಕೊಂಡರು.</verse>
				<verse number="11"></verse>
				<verse number="12">ಅವರು ಜೋಸೆಫನ ಮಗನಾದ ಮನಸ್ಸೆಯ ಕುಲದವರಿಗೇ ಮದುವೆಯಾದುದರಿಂದ ಅವರ ಸೊತ್ತು ತಂದೆಯ ಕುಲದಲ್ಲೇ ಉಳಿಯಿತು.</verse>
				<verse number="13">ಜೋರ್ಡನ್ ನದಿಯ ತೀರದಲ್ಲಿ ಜೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಆಜ್ಞಾವಿಧಿಗಳು ಇವೇ.</verse>
			</chapter>
		</book>
		<book number="5">
			<chapter number="1">
				<verse number="1">ಜೋರ್ಡನ್ ನದಿಯ ಆಚೆ, ಪಾರಾನಿಗೂ, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬ ಊರುಗಳಿಗೂ ನಡುವೆ, ಮರುಭೂಮಿಯಲ್ಲಿ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ ಮೋಶೆ ಇಸ್ರಯೇಲರಿಗೆ ಮಾಡಿದ ಉಪನ್ಯಾಸಗಳು ಇವು.</verse>
				<verse number="2">(ಹೋರೇಬಿನಿಂದ ಸೇಯಿರ್ ಬೆಟ್ಟಗಳ ಮಾರ್ಗವಾಗಿ ಕಾದೇಶ್ ಬರ್ನೇಯದವರೆಗೆ ಹನ್ನೊಂದು ದಿನದ ಪ್ರಯಾಣ.)</verse>
				<verse number="3">ಮೋಶೆ ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನನನ್ನು ಮತ್ತು ಅಷ್ಟಾರೋತ್, ಎದ್ರೈ ಎಂಬ ಪಟ್ಟಣಗಳಲ್ಲಿದ್ದ ಬಾಷಾನಿನ ಅರಸ ಓಗನನ್ನು ಜಯಿಸಿದನು. ತರುವಾಯ,</verse>
				<verse number="4">ಅಂದರೆ ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟ ನಲವತ್ತನೆಯ ವರ್ಷದ ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರ ಸ್ವಾಮಿ ತನಗೆ ಆಜ್ಞಾಪಿಸಿದ್ದನ್ನೆಲ್ಲ ಇಸ್ರಯೇಲರಿಗೆ ತಿಳಿಸಿದನು.</verse>
				<verse number="5">ಜೋರ್ಡನ್ ನದಿಯ ಆಚೆ ಮೋವಾಬ್ಯರ ದೇಶದಲ್ಲಿ ಮೋಶೆ ಈ ಮುಂದಣ ಧರ್ಮಶಾಸ್ತ್ರವನ್ನು ವಿವರಿಸುವುದಕ್ಕೆ ಪ್ರಾರಂಭಿಸಿದನು:</verse>
				<verse number="6">“ಹೋರೇಬಿನಲ್ಲಿ ನಮ್ಮ ದೇವರಾದ ಸರ್ವೇಶ್ವರ ನಮಗೆ, ‘ನೀವು ಈ ಬೆಟ್ಟದ ಬಳಿ ವಾಸಿಸಿದ್ದು ಸಾಕು;</verse>
				<verse number="7">ಈಗ ಹಿಂದಿರುಗಿ ಅಮೋರಿಯರು ಇರುವ ಮಲೆನಾಡಿಗೂ ಅದರ ಸುತ್ತಮುತ್ತಲಿನ ಪ್ರದೇಶಕ್ಕೂ ಪ್ರಯಾಣಮಾಡಿರಿ. ಅಲ್ಲಿನ ಕಣಿವೆ, ತಪ್ಪಲು, ಇಳಕಲು ಪ್ರದೇಶಗಳಿಗೂ ದಕ್ಷಿಣಸೀಮೆ, ಸಮುದ್ರತೀರ ಎಂಬ ನಾಡುಗಳಿಗೂ ಕಾನಾನ್ಯರ ನಾಡು, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಮಹಾನದಿಯವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೂ ತೆರಳಿರಿ.</verse>
				<verse number="8">ಆ ನಾಡನ್ನು ನಿಮಗೆ ಕೊಟ್ಟಿದ್ದೇನೆ. ಸರ್ವೇಶ್ವರನೆಂಬ ನಾನು ನಿಮ್ಮ ಪಿತೃಗಳಾದ ಅಬ್ರಹಾಮ, ಇಸಾಕ, ಯಕೋಬರಿಗೂ ಅವರ ಸಂತತಿಯವರಿಗೂ ಆ ನಾಡನ್ನು ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ್ದೆನು. ಅದನ್ನು ಸೇರಿ ಸ್ವಾಧೀನಮಾಡಿಕೊಳ್ಳಿ,’ ಎಂದು ಆಜ್ಞಾಪಿಸಿದರು.</verse>
				<verse number="9">“ಆ ಕಾಲದಲ್ಲಿ ನಾನು ನಿಮ್ಮನ್ನು ಸಂಬೋಧಿಸಿ, ‘ನಿಮ್ಮ ಭಾರವನ್ನು ನಾನೊಬ್ಬನೇ ಹೊರುವುದು ಅಸಾಧ್ಯ;</verse>
				<verse number="10">ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸಂಖ್ಯೆಯಲ್ಲಿ ಹೆಚ್ಚಿಸಿದ್ದಾರೆ; ನೀವು ಆಕಾಶದ ನಕ್ಷತ್ರಗಳಷ್ಟಾಗಿದ್ದೀರಿ;</verse>
				<verse number="11">ನೀವು ಈಗ ಇರುವುದಕ್ಕಿಂತ ಇನ್ನೂ ಸಾವಿರದಷ್ಟಾಗುವಂತೆ ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮ್ಮನ್ನು ಹೆಚ್ಚಿಸಲಿ; ಅವರೇ ವಾಗ್ದಾನಮಾಡಿದ ಪ್ರಕಾರ ನಿಮ್ಮನ್ನು ಆಶೀರ್ವದಿಸಲಿ;</verse>
				<verse number="12">ಆದರೆ ನಿಮ್ಮ ಸಮಸ್ಯೆಗಳನ್ನೂ ಹೊಣೆಯನ್ನೂ ವ್ಯಾಜ್ಯಗಳನ್ನೂ ನಾನೊಬ್ಬನೇ ಸಹಿಸುವುದು ಹೇಗೆ?</verse>
				<verse number="13">ಆದುದರಿಂದ ನೀವು ಪ್ರತಿಯೊಂದು ಕುಲದಿಂದ ಜ್ಞಾನಿಗಳೂ, ವಿವೇಕಿಗಳೂ, ಪ್ರಖ್ಯಾತರೂ ಆದ ವ್ಯಕ್ತಿಗಳನ್ನು ಆರಿಸಿಕೊಳ್ಳಿ; ನಾನು ಅವರನ್ನು ನಿಮಗೆ ಅಧಿಪತಿಗಳನ್ನಾಗಿ ನೇಮಿಸುತ್ತೇನೆ,’ ಎಂದು ಹೇಳಿದೆ.</verse>
				<verse number="14">ಅದಕ್ಕೆ ನೀವು, ‘ನಿಮ್ಮ ಆಲೋಚನೆಯಂತೆ ನಡೆಯುವುದು ವಿಹಿತವಾದದ್ದೇ’ ಎಂದು ಉತ್ತರಕೊಟ್ಟಿರಿ.</verse>
				<verse number="15">ಆಗ ನಾನು ನಿಮ್ಮಲ್ಲಿ ಪ್ರಸಿದ್ಧರಾದ ಬುದ್ಧಿವಂತರನ್ನು ಕರೆಯಿಸಿ ಒಂದೊಂದು ಕುಲದಲ್ಲಿ ಸಾವಿರ ಮಂದಿಯ ಮೇಲೆ, ನೂರು ಮಂದಿಯ ಮೇಲೆ, ಐವತ್ತು ಮಂದಿಯ ಮೇಲೆ ಹಾಗು ಹತ್ತು ಮಂದಿಯ ಮೇಲೆ ಅಧಿಕಾರಿಗಳನ್ನಾಗಿ ಹಾಗು ಉಪಾಧಿಕಾರಿಗಳನ್ನಾಗಿ ನೇಮಿಸಿದೆ.</verse>
				<verse number="16">ಆ ನ್ಯಾಯಾಧಿಪತಿಗಳಿಗೆ ನಾನು ಆಗ ಕೊಟ್ಟ ಸೂಚನೆ ಇದು: ‘ನೀವು ಸರ್ವಕುಲದವರ ವ್ಯಾಜ್ಯಗಳನ್ನು ವಿಚಾರಿಸಬೇಕು. ಅದು ಇಸ್ರಯೇಲರ ವ್ಯಾಜ್ಯವಾಗಿರಬಹುದು. ಅನ್ಯರೊಡನೆ ವ್ಯಾಜ್ಯವಾಗಿರಬಹುದು. ಎಲ್ಲವನ್ನು ನೀವು ನ್ಯಾಯದ ಪ್ರಕಾರವೇ ತೀರ್ಮಾನಿಸಬೇಕು.</verse>
				<verse number="17">ನ್ಯಾಯ ವಿಚಾರಿಸುವಾಗ ಮುಖದಾಕ್ಷಿಣ್ಯ ಮಾಡಬಾರದು; ಅಧಿಕಾರಿಗೂ ಅಲ್ಪರಿಗೂ ಸಮನಾಗಿ ಕಿವಿಗೊಡಿ; ನೀವು ದೇವರ ಹೆಸರಿನಲ್ಲಿ ನ್ಯಾಯ ತೀರಿಸುವುದರಿಂದ ಯಾವ ಮನುಷ್ಯನಿಗೂ ಹೆದರಬೇಡಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತನ್ನಿ; ನಾನೇ ಅವುಗಳನ್ನು ತೀರಿಸುತ್ತೇನೆ,’ ಎಂದು ಹೇಳಿದೆ.</verse>
				<verse number="18">ಹೀಗೆ, ನೀವು ಮಾಡಬೇಕಾದ ಎಲ್ಲ ಕಾರ್ಯಗಳ ವಿಷಯದಲ್ಲೂ ಆಗಲೇ ನಿಮಗೆ ಆಜ್ಞೆಕೊಟ್ಟೆ.</verse>
				<verse number="19">“ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ ಅಮೋರಿಯರ ಮಲೆನಾಡಿನ ಮಾರ್ಗವನ್ನು ಹಿಡಿದು, ನೀವು ನೋಡಿದ ಆ ಘೋರ ಮಹಾ ಅರಣ್ಯದಲ್ಲಿ ನಡೆದು, ಕಾದೇಶ್ ಬರ್ನೇಯಕ್ಕೆ ಸೇರಿದೆವು.</verse>
				<verse number="20">ಆಗ ನಾನು, ‘ನಮ್ಮ ದೇವರಾದ ಸರ್ವೇಶ್ವರ ನಮಗೆ ಕೊಡುವ ಅಮೋರಿಯರ ಮಲೆನಾಡಿನ ಹತ್ತಿರಕ್ಕೆ ಬಂದಿದ್ದೀರಿ;</verse>
				<verse number="21">ನಿಮ್ಮ ದೇವರಾದ ಸರ್ವೇಶ್ವರ ಆ ನಾಡನ್ನು ನಿಮಗೇ ಕೊಟ್ಟಿದ್ದಾರೆ; ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ಹೇಳಿದಂತೆ ಅದನ್ನು ಏರಿ ಸ್ವಾಧೀನಮಾಡಿಕೊಳ್ಳಿ; ನೀವು ದಿಗಿಲುಪಡದೆ ಧೈರ್ಯವಾಗಿಯೇ ಇರಬೇಕು,’ ಎಂದು ಹೇಳಿದೆ.</verse>
				<verse number="22">“ಆಗ ನೀವೆಲ್ಲರೂ ನನ್ನ ಬಳಿಗೆ ಬಂದು, ‘ನಮಗಿಂತ ಮುಂದಾಗಿ ಜನರನ್ನು ಕಳುಹಿಸುತ್ತೇವೆ; ಅವರು ನಮ್ಮ ಪರವಾಗಿ ಆ ನಾಡನ್ನು ಪರೀಕ್ಷಿಸಿನೋಡಿ, ನಾವು ಹತ್ತಿ ಹೋಗಬೇಕಾದ ದಾರಿಯ ಬಗ್ಗೆ ಹಾಗು ಸೇರಬೇಕಾದ ಊರುಗಳ ಬಗ್ಗೆ ನಮಗೆ ಸಮಾಚಾರ ತರಲಿ’, ಎಂದು ಹೇಳಿದಿರಿ.</verse>
				<verse number="23">ಅದು ಒಳ್ಳೇ ಆಲೋಚನೆಯೆಂದು ನಾನು ತಿಳಿದು, ನಿಮ್ಮಲ್ಲಿ ಕುಲಕ್ಕೆ ಒಬ್ಬೊಬ್ಬನ ಮೇರೆಗೆ, ಹನ್ನೆರಡು ಮಂದಿಯನ್ನು ಆರಿಸಿಕೊಂಡೆ.</verse>
				<verse number="24">ಅವರು ಹೋಗಿ ಆ ಮಲೆನಾಡನ್ನು ಹತ್ತಿ ಎಷ್ಕೋಲೆಂಬ ಕಣಿವೆಯ ಬಳಿಗೆ ಬಂದು, ಆ ಪ್ರದೇಶವನ್ನು ಸಂಚರಿಸಿ ನೋಡಿ,</verse>
				<verse number="25">ಅಲ್ಲಿನ ಹಣ್ಣುಹಂಪಲುಗಳಲ್ಲಿ ಕೆಲವನ್ನು ತಂದು ತೋರಿಸಿದರು; ನಮ್ಮ ದೇವರಾದ ಸರ್ವೇಶ್ವರ ನಮಗೆ ಕೊಡುವ ಆ ನಾಡು ಒಳ್ಳೆಯ ನಾಡೆಂದು ನಮಗೆ ತಿಳಿಸಿದರು.</verse>
				<verse number="26">ಆದರೂ ನೀವು ಅಲ್ಲಿಗೆ ಹತ್ತಿಹೋಗದೆ ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಉಲ್ಲಂಘಿಸಿದಿರಿ;</verse>
				<verse number="27">ನಿಮ್ಮ ನಿಮ್ಮ ಡೇರೆಗಳಲ್ಲಿ ಗೊಣಗುಟ್ಟಿದಿರಿ; ‘ಸರ್ವೇಶ್ವರ ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿದ್ದು ಹಗೆತನದಿಂದಲೇ; ಅಮೋರಿಯರ ಕೈಗೆ ಒಪ್ಪಿಸಿ ಸಂಹರಿಸಬೇಕೆಂದೇ.</verse>
				<verse number="28">ನಾವು ಹೋಗಬೇಕಾದ ಆ ಸೀಮೆ ಎಂಥದೆಂದು ಆಲೋಚಿಸಿ ನೋಡಬೇಕು; ಅಲ್ಲಿಗೆ ಹೋಗಿದ್ದ ನಮ್ಮ ಸಹೋದರರು ಬಂದು ಆ ನಾಡಿನ ಜನರು ನಮಗಿಂತ ಬಲಿಷ್ಠರೂ ಎತ್ತರವಾಗಿಯೂ ಇದ್ದಾರೆ. ಅವರಿರುವ ಪಟ್ಟಣಗಳು ದೊಡ್ಡವು, ಆಕಾಶವನ್ನು ಮುಟ್ಟುವಂಥ ಕೋಟೆಕೊತ್ತಲುಳ್ಳವು; ಅಲ್ಲಿ ‘ಅನಾಕಿಮ್’ ವಂಶಸ್ಥರನ್ನು ಕಂಡೆವೆಂದು ಹೇಳಿ ನಮ್ಮ ಧೈರ್ಯವನ್ನು ಕೆಡಿಸಿದ್ದಾರೆ,’ ಎಂದುಕೊಳ್ಳುತ್ತಿದ್ದಿರಿ.</verse>
				<verse number="29">“ಅದಕ್ಕೆ ನಾನು, ‘ಕಳವಳಪಡಬೇಡಿ, ಅವರಿಗೆ ಭಯಪಡಬೇಡಿ.</verse>
				<verse number="30">ನಿಮ್ಮ ಮುಂದುಗಡೆಯಲ್ಲೇ ಹೋಗುವ ನಿಮ್ಮ ದೇವರಾದ ಸರ್ವೇಶ್ವರ ಈಜಿಪ್ಟ್ ದೇಶದಲ್ಲೂ ನೀವು ನೋಡಿದ ಮರುಭೂಮಿಯಲ್ಲೂ ಪ್ರತ್ಯಕ್ಷರಾಗಿ ನಿಮ್ಮ ಪರವಾಗಿ ಯುದ್ಧಮಾಡಿದಂತೆಯೇ, ಈಗಲೂ ನಿಮ್ಮ ಕಡೆಯವರಾಗಿದ್ದು ಯುದ್ಧಮಾಡುವರು.</verse>
				<verse number="31">ನೀವು ಈ ಸ್ಥಳಕ್ಕೆ ಸೇರುವ ಪರ್ಯಂತರ ನಿಮ್ಮ ಪ್ರಯಾಣದಲ್ಲೆಲ್ಲಾ ಒಬ್ಬ ತಂದೆ ತನ್ನ ಮಗನನ್ನು ಹೇಗೋ ಹಾಗೆಯೇ, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಹೊತ್ತುತಂದರಲ್ಲವೇ?” ಎಂದು ನಿಮಗೆ ಹೇಳಿದೆ.</verse>
				<verse number="32">“ಆದರೂ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ನಂಬಲೇ ಇಲ್ಲ.</verse>
				<verse number="33">ನೀವು ಹೋಗಬೇಕಾದ ದಾರಿಯನ್ನು ತೋರಿಸುವುದಕ್ಕೂ ಕಂಡು ಇಳಿಯಬೇಕಾದ ಸ್ಥಳಗಳನ್ನು ಗೊತ್ತುಮಾಡುವುದಕ್ಕೂ ಇರುಳಲ್ಲಿ ಬೆಂಕಿಯಲ್ಲೂ ಹಗಲಲ್ಲಿ ಮೇಘದಲ್ಲೂ ನಿಮ್ಮ ಮುಂದುಗಡೆ ಹೋದ ದೇವರನ್ನು ನೀವು ನಂಬಲಿಲ್ಲ.</verse>
				<verse number="34">“ಸರ್ವೇಶ್ವರ ನಿಮ್ಮ ಮಾತುಗಳನ್ನು ಕೇಳಿ ಕೋಪಗೊಂಡರು. ಅವರು ನಿಮ್ಮ ಪಿತೃಗಳಿಗೆ ವಾಗ್ದಾನ ಮಾಡಿದ ಒಳ್ಳೇ ನಾಡನ್ನು ಈ ದುಷ್ಟಜನರಲ್ಲಿ ಯಾರೂ ನೋಡುವುದಿಲ್ಲವೆಂದು ಪ್ರಮಾಣಮಾಡಿದರು.</verse>
				<verse number="35"></verse>
				<verse number="36">‘ಯೆಫುನ್ನೆಯ ಮಗ ಕಾಲೇಬನೊಬ್ಬನೇ ಸರ್ವೇಶ್ವರನಾದ ನನ್ನನ್ನು ಮನಃಪೂರ್ವಕವಾಗಿ ಅನುಸರಿಸಿದ್ದರಿಂದ ಅವನೇ ಅದನ್ನು ನೋಡುವನು; ಅವನು ಸಂಚರಿಸಿದ ಪ್ರದೇಶವನ್ನು ಅವನಿಗೆ ಹಾಗು ಅವನ ಸಂತತಿ ಅವರಿಗೆ ಕೊಡುವೆನು,’ ಎಂದು ಹೇಳಿದರು.</verse>
				<verse number="37">ಅದು ಮಾತ್ರವಲ್ಲದೆ, ಸರ್ವೇಶ್ವರ ನಿಮ್ಮ ದೆಸೆಯಿಂದ ನನ್ನ ಮೇಲೆಯೂ ಕೋಪಮಾಡಿದರು. ‘ನೀನೂ ಆ ನಾಡಿಗೆ ಸೇರುವುದಿಲ್ಲ;</verse>
				<verse number="38">ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಯೇಲರಿಗೆ ಆ ನಾಡನ್ನು ಸ್ವಾಧೀನಪಡಿಸುವನು; ಆದುದರಿಂದ ಅವನನ್ನು ಧೈರ್ಯಗೊಳಿಸು.</verse>
				<verse number="39">ಆದರೆ ಪರರ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಮನೆಯವರು ಹಾಗು ಒಳ್ಳೆಯದು, ಕೆಟ್ಟದು ಎಂಬುದನ್ನು ಅರಿಯದ ನಿಮ್ಮ ಹಸುಳೆಗಳು ಅಲ್ಲಿಗೆ ಸೇರುವರು; ಅವರಿಗೇ ಆ ನಾಡನ್ನು ಕೊಡುವೆನು; ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು.</verse>
				<verse number="40">ನೀವಾದರೋ ಹಿಂದಿರುಗಿ ಕೆಂಪು ಸಮುದ್ರದ ಮಾರ್ಗವನ್ನು ಹಿಡಿದು ಮರುಭೂಮಿಗೆ ಹೊರಟುಹೋಗಿ’ ಎಂದು ಆಜ್ಞಾಪಿಸಿದರು.</verse>
				<verse number="41">“ಅದಕ್ಕೆ ನೀವು, ‘ನಾವು ಸರ್ವೇಶ್ವರನಿಗೆ ದ್ರೋಹಿಗಳಾದೆವು; ಆದರೂ ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ ನಾವೇ ಈಗ ಆ ಮಲೆನಾಡನ್ನು ಹತ್ತಿ ಯುದ್ಧಮಾಡುತ್ತೇವೆ,’ ಎಂದು ಉತ್ತರಕೊಟ್ಟಿರಿ; ನೀವೆಲ್ಲರು ನಿಮ್ಮ ನಿಮ್ಮ ಆಯುಧಗಳನ್ನು ತೆಗೆದುಕೊಂಡು ಆ ಮಲೆನಾಡನ್ನು ಹತ್ತಿ ಜಯಿಸುವುದು ಅಲ್ಪಕಾರ್ಯವೆಂದು ಭಾವಿಸಿ ಹೊರಡುವುದಕ್ಕಿದ್ದಿರಿ.</verse>
				<verse number="42">ಆದರೆ ಸರ್ವೇಶ್ವರ ನನಗೆ, ‘ನಾನು ಇವರ ಮಧ್ಯೆ ಇಲ್ಲವಾದುದರಿಂದ ಇವರು ಸೋತುಹೋಗುವರು; ಯುದ್ಧಮಾಡಲೂಬಾರದು, ಆ ಮಲೆನಾಡಿಗೆ ಹೋಗಲೂಬಾರದು ಎಂದು ಇವರಿಗೆ ಆಜ್ಞಾಪಿಸು,’ ಎಂದರು.</verse>
				<verse number="43">“ನಾನು ಆ ಮಾತನ್ನು ನಿಮಗೆ ತಿಳಿಸಿದರೂ ನೀವು ಕಿವಿಗೊಡದೆ ಸರ್ವೇಶ್ವರನ ಆಜ್ಞೆಯನ್ನು ತಾತ್ಸಾರಮಾಡಿ ಸೊಕ್ಕಿನಿಂದ ಆ ಬೆಟ್ಟವನ್ನು ಹತ್ತಿದಿರಿ.</verse>
				<verse number="44">ಆಗ ಬೆಟ್ಟದಲ್ಲಿದ್ದ ಅಮೋರಿಯರು ನಿಮಗೆ ವಿರುದ್ಧ ಹೊರಟು ಜೇನುನೊಣಗಳಂತೆ ನಿಮ್ಮನ್ನು ಮುತ್ತಿ ಸೇಯೀರಿನಲ್ಲಿ ಹೊರ್ಮದವರೆಗೂ ಬೆನ್ನಟ್ಟಿ ಸಂಹರಿಸಿದರು.</verse>
				<verse number="45">ನೀವು ಹಿಂದಿರುಗಿ ಬಂದು ಸರ್ವೇಶ್ವರನ ಮುಂದೆ ಗೋಳಾಡಿದಿರಿ. ಆಗ ಅವರು ನಿಮ್ಮ ಮೊರೆಯನ್ನು ಕೇಳಲೂ ಇಲ್ಲ, ನಿಮ್ಮನ್ನು ರಕ್ಷಿಸಲೂ ಇಲ್ಲ.</verse>
				<verse number="46">“ಆಮೇಲೆ ನೀವು ಕಾದೇಶಿನಲ್ಲಿ ಬಹುಕಾಲ ವಾಸವಾಗಿದ್ದಿರಿ.</verse>
			</chapter>
			<chapter number="2">
				<verse number="1">“ಆಗ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಮರುಭೂಮಿಗೆ ಹೊರಟು ಕೆಂಪುಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಮಲೆನಾಡನ್ನು ಸುತ್ತುತ್ತಿದ್ದೆವು.</verse>
				<verse number="2">ಆಮೇಲೆ ಸರ್ವೇಶ್ವರ ನನಗೆ,</verse>
				<verse number="3">‘ನೀವು ಈ ಮಲೆನಾಡನ್ನು ಸುತ್ತಿದ್ದು ಸಾಕು; ಉತ್ತರದಿಕ್ಕಿಗೆ ತಿರುಗಿಕೊಳ್ಳಿ.</verse>
				<verse number="4">ಇಸ್ರಯೇಲರಿಗೆ ಹೀಗೆ ಆಜ್ಞಾಪಿಸು; ಸೇಯೀರ್ ನಾಡಿನಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ನಾಡನ್ನು ದಾಟುವುದಕ್ಕಿದ್ದೀರಿ. ಅವರು ನಿಮಗೆ ಅಂಜುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.</verse>
				<verse number="5">ನಾನು ಸೇಯೀರ್ ಮಲೆನಾಡನ್ನು ಏಸಾವ್ಯರಿಗೇ ಸ್ವದೇಶವಾಗಿ ಕೊಟ್ಟಿದ್ದೇನೆ. ಆದುದರಿಂದ ಅದರಲ್ಲಿ ನಿಮಗೆ ಹೆಜ್ಜೆಯಿಡುವಷ್ಟು ನೆಲವನ್ನಾದರೂ ಕೊಡುವುದಿಲ್ಲ.</verse>
				<verse number="6">ನೀವು ಅಲ್ಲಿ ಕಾಸುಕೊಟ್ಟು ಆಹಾರಪದಾರ್ಥಗಳನ್ನು ಕೊಂಡು ತಿನ್ನಬೇಕು; ನೀರನ್ನೂ ಕೊಂಡುಕೊಂಡು ಕುಡಿಯಬೇಕು,’ ಎಂದರು.</verse>
				<verse number="7">“ನೀವು ಕೈಹಾಕಿದ ಎಲ್ಲ ಕೆಲಸಗಳನ್ನೂ ನಿಮ್ಮ ದೇವರಾದ ಸರ್ವೇಶ್ವರ ಸಫಲಪಡಿಸಿದ್ದಾರೆ. ಈ ದೊಡ್ಡ ಮರುಭೂಮಿಯಲ್ಲಿ ನೀವು ಸಂಚರಿಸುತ್ತಿರುವಾಗಲೆಲ್ಲ ಅವರು ನಿಮ್ಮನ್ನು ಪರಾಂಬರಿಸುತ್ತಾ ಬಂದರು. ಈ ನಲವತ್ತು ವರ್ಷ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದುದರಿಂದಲೆ ನಿಮಗೆ ಏನೂ ಕಡಿಮೆಯಾಗಲಿಲ್ಲ,” ಎಂದು ಹೇಳಿದನು.</verse>
				<verse number="8">“ಆದಕಾರಣ ನಾವು ಸೇಯೀರಿನಲ್ಲಿರುವ ನಮ್ಮ ಬಂಧುಗಳಾದ ಏಸಾವ್ಯರ ಕಡೆಯಿಂದ ಓರೆಯಾಗಿ ಪ್ರಯಾಣಮಾಡಿ ಅರಾಬದ ಮಾರ್ಗವನ್ನು ಬಿಟ್ಟು ಏಲತ್, ಎಚ್ಯೋನ್ಗೆಬೆರ್ ಎಂಬ ಪಟ್ಟಣಗಳಿಂದ ಪ್ರಯಾಣಮಾಡಿ ಮೋವಾಬ್ಯರ ಅಡವಿಯ ದಾರಿಯಲ್ಲಿ ನಡೆದೆವು.</verse>
				<verse number="9">ಆಗ ಸರ್ವೇಶ್ವರ ನನಗೆ, ‘ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸೊತ್ತನ್ನು ಕೊಡುವುದಿಲ್ಲ. ನೀವು ಎದ್ದು ಜೆರೆದ್ ಹಳ್ಳವನ್ನು ದಾಟಬೇಕು.’ ಎಂದು ಆಜ್ಞಾಪಿಸಿದರು.</verse>
				<verse number="10">(ತತ್ಪೂರ್ವದಲ್ಲಿ ಏಮಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಬಲಿಷ್ಠರೂ ಬಹುಮಂದಿಯೂ ಅನಾಕಿಮರಂತೆ ಎತ್ತರವಾದವರೂ ಆಗಿದ್ದರು.</verse>
				<verse number="11">ಅವರು ಅನಾಕಿಮರಂತೆ ರೆಫಾಯರಿಗೆ ಸೇರಿದವರೆಂದು ಹೇಳುವುದುಂಟು; ಆದರೆ ಮೋವಾಬ್ಯರು ಅವರನ್ನು ಏಮಿಯರೆಂದು ಹೇಳುತ್ತಾರೆ.</verse>
				<verse number="12">ಅದೇ ಪೂರ್ವಕಾಲದಲ್ಲಿ ಹೋರಿಯರು ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಯೇಲರು ತಮಗೆ ಸರ್ವೇಶ್ವರ ಕೊಟ್ಟ ನಾಡನ್ನು ಹೇಗೆ ಸ್ವಾಧೀನಮಾಡಿಕೊಂಡರೋ ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ ಅವರ ನಾಡಿನಲ್ಲಿ ವಾಸಮಾಡಿದರು.)</verse>
				<verse number="13">“ಆಗ ನಾವು ಜೆರೆದ್ ಹಳ್ಳವನ್ನು ದಾಟಿದೆವು. ನಾವು ಕಾದೇಶ್ ಬರ್ನೇಯದಿಂದ ಹೊರಟು ಜೆರೆದ್ ಹಳ್ಳವನ್ನು ದಾಟಿದವರೆಗೆ ಮೂವತ್ತೆಂಟು ವರ್ಷಕಾಲ ಆಯಿತು. ಸರ್ವೇಶ್ವರ ಪ್ರಮಾಣಪೂರ್ವಕವಾಗಿ ಹೇಳಿದ್ದಂತೆ ಅಷ್ಟರಲ್ಲಿ ಆ ತಲೆಯ ಸೈನಿಕರೆಲ್ಲರು ಸತ್ತುಹೋಗಿದ್ದರು.</verse>
				<verse number="14"></verse>
				<verse number="15">ಸರ್ವೇಶ್ವರನ ಹಸ್ತವು ಅವರಿಗೆ ವಿರೋಧವಾಗಿದ್ದುದರಿಂದ ಪಾಳೆಯದಲ್ಲಿ ಒಬ್ಬನೂ ಉಳಿಯದಂತೆ ನಾಶವಾದರು.</verse>
				<verse number="16">“ಆ ಸೈನಿಕರೆಲ್ಲರು ಸತ್ತುಹೋದ ನಂತರ ಸರ್ವೇಶ್ವರ ನನಗೆ,</verse>
				<verse number="17"></verse>
				<verse number="18">‘ನೀವು ಈಗ ಮೋವಾಬ್ಯರ ಪ್ರಾಂತ್ಯವಾಗಿರುವ ಆರ್ ಎಂಬ ಪ್ರದೇಶವನ್ನು ದಾಟುವಿರಿ.</verse>
				<verse number="19">ಮುಂದೆ ನೀವು ಅಮ್ಮೋನಿಯರ ಹತ್ತಿರಕ್ಕೆ ಬರುವಾಗ ಅವರಿಗೆ ವೈರಿಗಳಾಗಿ ನಡೆದು ಯುದ್ಧಮಾಡಬೇಡಿ. ನಾನು ಆ ನಾಡನ್ನು ಲೋಟನ ವಂಶದವರಾದ ಅಮ್ಮೋನಿಯರಿಗೆ ಸೊತ್ತಾಗಿ ಕೊಟ್ಟಿದ್ದೇನೆ. ಆದುದರಿಂದ ನಿಮಗೆ ಅದರಲ್ಲಿ ಕಿಂಚಿತ್ತು ಭಾಗವನ್ನೂ ಕೊಡುವುದಿಲ್ಲ.</verse>
				<verse number="20">(ಪೂರ್ವಕಾಲದಲ್ಲಿ ರೆಫಾಯರು ಆ ನಾಡಿನಲ್ಲಿ ವಾಸವಾಗಿದ್ದುದರಿಂದ ಅದು ಕೂಡ ರೆಫಾಯರ ನಾಡೆನಿಸಿಕೊಳ್ಳುತ್ತದೆ. ಅಮ್ಮೋನಿಯರು ಅವರನ್ನು ಜಂಜುಮ್ಯರೆಂದು ಕರೆಯುತ್ತಾರೆ;</verse>
				<verse number="21">ಅವರು ಬಲಿಷ್ಠರು, ಬಹುಜನರು ಹಾಗು ಅನಾಕಿಮರಂತೆ ಎತ್ತರದವರೂ ಆಗಿದ್ದರು.</verse>
				<verse number="22">ಆದರೆ ಹೇಗೆ ಸರ್ವೇಶ್ವರ ಸೇಯೀರಿನಲ್ಲಿರುವ ಏಸಾವ್ಯರ ಪರವಾಗಿ ಹೋರಿಯರನ್ನು ಹೊರದೂಡಿದಾಗ ಏಸಾವ್ಯರು ಆ ನಾಡನ್ನು ಸ್ವಾಧೀನಮಾಡಿಕೊಂಡು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೋ,</verse>
				<verse number="23">ಮತ್ತು ಹೇಗೆ ಕಫ್ತೋರಿಂದ ಬಂದ ಕಫ್ತೋರ್ಯರು ಗಾಜಾ ಪಟ್ಟಣದವರೆಗೂ ಹಳ್ಳಿಗಳಲ್ಲಿದ್ದ ಅವ್ವಿಯರನ್ನು ನಾಶಮಾಡಿ ಅವರ ಸ್ಥಳದಲ್ಲಿ ವಾಸಮಾಡಿದರೋ, ಹಾಗೆಯೇ ಸರ್ವೇಶ್ವರ ರೆಫಾಯರನ್ನು ಅಮ್ಮೋನಿಯರ ಬಳಿಯಿಂದ ಹೊರದೂಡಿದರು; ಅಮ್ಮೋನಿಯರು ಆ ನಾಡನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು.)</verse>
				<verse number="24">ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸ ಸೀಹೋನನು ನಿಮ್ಮಿಂದ ಸೋತುಹೋಗಿ ಅವನ ರಾಜ್ಯ ನಿಮಗೇ ವಶವಾಗಬೇಕೆಂದು ನಿಮಗೆ ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ ಆ ನಾಡನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಿಸಿರಿ.</verse>
				<verse number="25">ಲೋಕದಲ್ಲಿರುವ ಎಲ್ಲ ಜನಗಳಿಗೂ ಇಂದಿನಿಂದ ನಿಮ್ಮ ಬಗ್ಗೆ ದಿಗಿಲೂ ಹೆದರಿಕೆಯೂ ಉಂಟಾಗುವಂತೆ ಮಾಡುತ್ತೇನೆ. ಅವರು ನಿಮ್ಮ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ಗಡಗಡನೆ ನಡುಗಿ ಸಂಕಟಪಡುವರು,’ ಎಂದು ಹೇಳಿದರು.</verse>
				<verse number="26">“ಆಗ ನಾನು ಕೆದೇಮೋತಿನ ಮರುಭೂಮಿಯಿಂದ ಹೆಷ್ಬೋನಿನ ಅರಸ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದೆ.</verse>
				<verse number="27">‘ನಿನ್ನ ನಾಡನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಎಡಬಲಕ್ಕೆ ತಿರುಗದೆ ದಾರಿಹಿಡಿದು ನಡೆದುಹೋಗುವೆವು.</verse>
				<verse number="28">ನಮ್ಮಿಂದ ಕ್ರಯ ತೆಗೆದುಕೊಂಡು ಆಹಾರಪದಾರ್ಥಗಳನ್ನೂ ಕುಡಿಯಲು ನೀರನ್ನೂ ಕೊಡಿ.</verse>
				<verse number="29">ನಾವು ಜೋರ್ಡನ್ ಹೊಳೆಯನ್ನು ದಾಟಿ, ನಮ್ಮ ದೇವರಾದ ಸರ್ವೇಶ್ವರ ನಮಗೆ ಕೊಡುವ ನಾಡನ್ನು ಸೇರಬೇಕೆಂದಿದ್ದೇವೆ. ಸೇಯೀರಿನಲ್ಲಿರುವ ಏಸಾವ್ಯರು ಹಾಗು ಆರ್ ಪ್ರದೇಶದಲ್ಲಿರುವ ಮೋವಾಬ್ಯರು ನಮಗೆ ದಾರಿಕೊಟ್ಟಂತೆ ನೀನೂ ಕೊಡಬೇಕು. ಕಾಲ್ನಡೆಯಾಗಿ ನಿನ್ನ ನಾಡನ್ನು ದಾಟಿಹೋಗುವುದಕ್ಕೆ ನಿನ್ನ ಅಪ್ಪಣೆಯಾಗಬೇಕೇ ಹೊರತು ಬೇರೆ ಏನೂ ಬೇಕಿಲ್ಲ,’ ಎಂದು ವಿನಯಪೂರ್ವಕವಾದ ಮಾತುಗಳಿಂದ ಹೇಳಿಸಿದೆ.</verse>
				<verse number="30">ಆದರೆ ಸರ್ವೇಶ್ವರ ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು, ಹಟಮಾರಿಯನ್ನಾಗಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ನಿಮ್ಮಿಂದ ಅವನು ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಸರ್ವೇಶ್ವರನ ಸಂಕಲ್ಪವಾಗಿತ್ತು. ಅದು ಈಗಾಗಲೇ ನೆರವೇರಿದೆ.</verse>
				<verse number="31">“ತರುವಾಯ ಸರ್ವೇಶ್ವರ ನನಗೆ, ‘ಈಗ ನಾನು ಸೀಹೋನನನ್ನೂ ಅವನ ನಾಡನ್ನೂ ನಿಮಗೆ ವಶಪಡಿಸುವುದಕ್ಕೆ ಪ್ರಾರಂಭಿಸಿದ್ದೇನೆ; ಅದನ್ನು ಸ್ವಾಧೀನ ಮಾಡಿಕೊಳ್ಳಲು ಶುರುಮಾಡಿರಿ,’ ಎಂದು ಹೇಳಿದರು.</verse>
				<verse number="32">ಸೀಹೋನನು ತನ್ನ ಜನರೆಲ್ಲರ ಸಮೇತ ನಮ್ಮೊಡನೆ ಯುದ್ಧಮಾಡಲು ಯಹಜಿಗೆ ಹೊರಟುಬಂದ.</verse>
				<verse number="33">ನಮ್ಮ ದೇವರಾದ ಸರ್ವೇಶ್ವರ ಅವನನ್ನು ನಮ್ಮಿಂದ ಪರಾಜಯ ಪಡಿಸಿದರು. ನಾವು ಅವನನ್ನು, ಅವನ ಮಕ್ಕಳನ್ನು ಹಾಗು ಜನರೆಲ್ಲರನ್ನು ಸದೆಬಡಿದೆವು.</verse>
				<verse number="34">ಆ ಕಾಲದಲ್ಲಿ ನಾವು ಅವನ ಎಲ್ಲ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಂಡು, ಅವುಗಳಲ್ಲಿದ್ದ ಗಂಡಸರನ್ನು, ಹೆಂಗಸರನ್ನು ಹಾಗು ಮಕ್ಕಳನ್ನು ನಿಶ್ಯೇಷವಾಗಿ ಹತಮಾಡಿದೆವು; ಒಬ್ಬನನ್ನೂ ಉಳಿಸಲಿಲ್ಲ.</verse>
				<verse number="35">ಪಶುಗಳನ್ನು ಮಾತ್ರ ಉಳಿಸಿ ನಮ್ಮ ಸ್ವಂತಕ್ಕಾಗಿ ತೆಗೆದುಕೊಂಡು, ಊರುಗಳನ್ನು ಸೂರೆಮಾಡಿಬಿಟ್ಟೆವು.</verse>
				<verse number="36">ಅರ್ನೋನ್ ಕಣಿವೆಯ ಅಂಚಿನಲ್ಲಿರುವ ಅರೋಯೇರ್ ಪಟ್ಟಣ ಮತ್ತು ಕಣಿವೆಯಲ್ಲೇ ಇರುವ ಪಟ್ಟಣ ಇವುಗಳನ್ನು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೆ ಯಾವ ಪಟ್ಟಣವನ್ನು ಜಯಿಸಲೂ ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಸರ್ವೇಶ್ವರ ಅವುಗಳೆಲ್ಲ ನಮ್ಮ ಕೈಗೆ ಸಿಕ್ಕುವಂತೆ ಮಾಡಿದರು.</verse>
				<verse number="37">ಅಮ್ಮೋನಿಯರ ನಾಡನ್ನು ಮಾತ್ರ, ಅಂದರೆ ಯಬ್ಬೋಕ್ ಹೊಳೆಯ ಬಳಿಯಲ್ಲಿರುವ ಪ್ರದೇಶ ಮತ್ತು ಮಲೆನಾಡಿನ ಊರುಗಳು ಇವೇ ಮೊದಲಾದ ಸ್ಥಳಗಳನ್ನು ನೀವು ಅತಿಕ್ರಮಿಸಲಿಲ್ಲ; ಅಲ್ಲಿಗೆ ಹೋಗಲೇಬಾರದೆಂದು ನಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದ್ದರು.</verse>
			</chapter>
			<chapter number="3">
				<verse number="1">“ತರುವಾಯ ನಾವು ಹಿಂದಿರುಗಿ ಬಾಷಾನಿನ ಮಾರ್ಗವನ್ನು ಹಿಡಿದು ಹತ್ತಿಹೋದೆವು. ಆಗ ಬಾಷಾನಿನ ಅರಸ ಓಗನು ತನ್ನ ಜನರೆಲ್ಲರ ಸಮೇತ ನಮಗೆ ವಿರುದ್ಧ ಯುದ್ಧಮಾಡುವುದಕ್ಕೆ ಎದ್ರೈವೂರಿಗೆ ಹೊರಟು ಬಂದನು.</verse>
				<verse number="2">ಆಗ ಸರ್ವೇಶ್ವರ ನನಗೆ, ‘ಅವನಿಗೆ ಭಯಪಡಬೇಡ; ನಾನು ಅವನನ್ನು, ಅವನ ಸಮಸ್ತ ಜನರನ್ನು ಹಾಗು ನಾಡನ್ನು ನಿನ್ನ ಕೈವಶಮಾಡಿದ್ದೇನೆ; ನೀನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನನಿಗೆ ಮಾಡಿದಂತೆಯೇ ಇವನಿಗೂ ಮಾಡು,’ ಎಂದು ಆಜ್ಞಾಪಿಸಿದರು.</verse>
				<verse number="3">“ಬಾಷಾನಿನ ಅರಸ ಓಗನು ಹಾಗು ಅವನ ಜನರೆಲ್ಲರು ನಮ್ಮಿಂದ ಸೋತುಹೋಗುವಂತೆ ನಮ್ಮ ದೇವರಾದ ಸರ್ವೇಶ್ವರ ಮಾಡಿದರು. ಅವರಲ್ಲಿ ಒಬ್ಬರಾದರು ಉಳಿಯದಂತೆ ಅವರನ್ನು ಹತಮಾಡಿದೆವು.</verse>
				<verse number="4">ಅಂದು ಅವನ ಎಲ್ಲ ಪಟ್ಟಣಗಳನ್ನು ಜಯಿಸಿದೆವು; ನಾವು ಜಯಿಸದ ಕೋಟೆ ಒಂದೂ ಇರಲಿಲ್ಲ; ಬಾಷಾನಿನಲ್ಲಿರುವ ಓಗನ ರಾಜ್ಯದಲ್ಲಿ ಅಂದರೆ, ಅರ್ಗೋಬ್ ಎಂಬ ಸಮಸ್ತ ಪ್ರದೇಶದಲ್ಲಿ ಅರವತ್ತು ಪಟ್ಟಣಗಳನ್ನು ತೆಗೆದುಕೊಂಡೆವು.</verse>
				<verse number="5">ಅವೆಲ್ಲವು ಎತ್ತರವಾದ ಪೌಳಿಗೋಡೆಗಳಿಂದ, ಕದಗಳಿಂದ ಹಾಗು ಅಗುಳಿಗಳಿಂದ ಸುಭದ್ರವಾದ ಪಟ್ಟಣಗಳಾಗಿದ್ದವು. ಅವುಗಳಲ್ಲದೆ ಅನೇಕ ಹಳ್ಳಿಪಳ್ಳಿಗಳು ಇದ್ದವು.</verse>
				<verse number="6">ನಾವು ಹೆಷ್ಬೋನಿನ ಅರಸನಾದ ಸೀಹೋನನ ಪಟ್ಟಣಗಳಲ್ಲಿದ್ದ ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು ನಿಶ್ಯೇಷವಾಗಿ ನಾಶಮಾಡಿದೆವು.</verse>
				<verse number="7">ಪಶುಪ್ರಾಣಿಗಳನ್ನು ಮಾತ್ರ ಉಳಿಸಿ ಸ್ವಂತ ಉಪಯೋಗಕ್ಕೆ ತೆಗೆದುಕೊಂಡು ಊರುಗಳನ್ನೆಲ್ಲ ಸೂರೆಮಾಡಿಬಿಟ್ಟವು.</verse>
				<verse number="8">“ಆ ಕಾಲದಲ್ಲಿ ನಾವು ಅರ್ನೋನ್ ನದಿ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗೂ ಜೋರ್ಡನ್ ನದಿಯ ಈಚೆ ಇರುವ ದೇಶವನ್ನೆಲ್ಲಾ ಅಮೋರಿಯರ ಇಬ್ಬರು ಅರಸರಿಂದ ತೆಗೆದುಕೊಂಡೆವು.</verse>
				<verse number="9">(ಹೆರ್ಮೋನ್ ಪರ್ವತಕ್ಕೆ ಸಿದೋನ್ಯರು ಸಿರ್ಯೋನೆಂದೂ ಅಮೋರಿಯರು ಸೆನೀರ್ ಎಂದೂ ಹೆಸರಿಟ್ಟುಕೊಂಡಿದ್ದರು.)</verse>
				<verse number="10">ಹೀಗೆ ಮೀಶೋರೆಂಬ ಎತ್ತರವಾದ ಬೈಲುಸೀಮೆಯ ಎಲ್ಲಾ ಪಟ್ಟಣಗಳನ್ನೂ ಗಿಲ್ಯಾದ್ ಸೀಮೆಯನ್ನೂ ಓಗನ ರಾಜ್ಯವಾದ ಸಲ್ಕಾ, ಎದ್ರೈ ಎಂಬ ಪಟ್ಟಣಗಳಿಂದ ಕೂಡಿರುವ ಬಾಷಾನ್ ಸೀಮೆಯನ್ನೂ ಸ್ವಾಧೀನಮಾಡಿಕೊಂಡೆವು.</verse>
				<verse number="11">(ರೆಫಾಯರೊಳಗೆ ಬಾಷಾನಿನ ಓಗನೊಬ್ಬನೇ ಉಳಿದಿದ್ದನು. ಅವನ ಮಂಚ ಕಬ್ಬಿಣದ್ದು; ಅಮ್ಮೋನಿಯರ ರಬ್ಬಾ ಎಂಬ ಪಟ್ಟಣದಲ್ಲಿ ಅದನ್ನು ಈಗಲೂ ನೋಡಬಹುದು. ಪುರುಷನ ಕೈಯಳತೆಯ ಪ್ರಕಾರ ಅದರ ಉದ್ದ ಒಂಭತ್ತು ಮೊಳ, ಅಗಲ ನಾಲ್ಕು ಮೊಳ.)</verse>
				<verse number="12">“ಆ ಕಾಲದಲ್ಲಿ ನಾವು ಆ ನಾಡನ್ನೆಲ್ಲ ಸ್ವಾಧೀನಮಾಡಿಕೊಂಡೆವು. ಅರ್ನೋನ್ ಹಳ್ಳದ ಬಳಿಯಲ್ಲಿರುವ ಅರೋಯೇರ್ ಮೊದಲುಗೊಂಡು ಗಿಲ್ಯಾದ್ ಸೀಮೆಯ ಮಧ್ಯದವರೆಗೂ ಇರುವ ಪ್ರದೇಶವನ್ನೆಲ್ಲಾ ಅದರ ಪಟ್ಟಣಗಳ ಸಹಿತವಾಗಿ ನಾನು ರೂಬೇನ್ಯರಿಗೂ ಗಾದ್ಯರಿಗೂ ಕೊಟ್ಟೆನು.</verse>
				<verse number="13">ಗಿಲ್ಯಾದಿನ ಮಿಕ್ಕ ಭಾಗವನ್ನೂ ಓಗನ ರಾಜ್ಯ ಆಗಿದ್ದ ಅರ್ಗೋಬ್ ಎನಿಸಿಕೊಳ್ಳುವ ಸಮಸ್ತ ಬಾಷಾನ್ ನಾಡನ್ನೂ ಮನಸ್ಸೆಕುಲದ ಅರ್ಧ ಜನರಿಗೆ ಕೊಟ್ಟೆನು.</verse>
				<verse number="14">(ಬಾಷಾನ್ ನಾಡು ರೆಫಾಯರ ನಾಡೆನಿಸಿಕೊಳ್ಳುತ್ತದೆ. ಮನಸ್ಸೆಯ ವಂಶಸ್ಥನಾದ ಯಾಯೀರನು ಗೆಷೂರ್ಯರ ಮತ್ತು ಮಾಕಾತ್ಯರ ಮೇರೆಯವರೆಗೆ ಅರ್ಗೋಬ್ ಎಂಬ ಪ್ರದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಬಾಷಾನಿಗೆ ಸೇರಿರುವ ಆ ಪ್ರಾಂತ್ಯಕ್ಕೆ ಯಾಯೀರನ ಗ್ರಾಮಗಳೆಂದು ತನ್ನ ಹೆಸರಿಟ್ಟನು. ಈ ಹೆಸರು ಇಂದಿನವರೆಗೂ ಉಂಟು).</verse>
				<verse number="15">ನಾನು ಗಿಲ್ಯಾದ್ ನಾಡನ್ನು ಮಾಕೀರನಿಗೂ</verse>
				<verse number="16">ಗಿಲ್ಯಾದ್ ಮೊದಲುಗೊಂಡು (ದಕ್ಷಿಣ ಕಡೆಯಲ್ಲಿ) ಅರ್ನೋನ್ ತಗ್ಗಿನವರೆಗೂ (ಪೂರ್ವ ಕಡೆಯಲ್ಲಿ) ಯಬ್ಬೋಕ್ ಹೊಳೆಯವರೆಗೂ ಇರುವ ಪ್ರದೇಶವನ್ನು ರೂಬೇನ್ಯರಿಗೂ ಗಾದ್ಯರಿಗೂ ಕೊಟ್ಟೆ. ಅರ್ನೋನ್ ತಗ್ಗಿನ ಮಧ್ಯಭಾಗವೇ ಅವರ ದಕ್ಷಿಣ ಎಲ್ಲೆ. ಅವರಿಗೂ ಅಮ್ಮೋನಿಯರಿಗೂ ನಡುವೆ ಇರುವ ಯಬ್ಬೋಕ್ ಹೊಳೆಯು ಅವರ ಪೂರ್ವದಿಕ್ಕಿನ ಎಲ್ಲೆ.</verse>
				<verse number="17">ಪಶ್ಚಿಮದಲ್ಲಿ ಅವರ ಪ್ರದೇಶ ಜೋರ್ಡನ್ ನದಿಯವರೆಗೆ ಹರಡಿತ್ತು. ಉತ್ತರದಲ್ಲಿ ಕಿನ್ನೆರೆತ್ ಸರೋವರ ಮೊದಲ್ಗೊಂಡು ದಕ್ಷಿಣದಲ್ಲಿ ಲವಣ ಸಮುದ್ರದವರೆಗೆ ವಿಸ್ತರಿಸಿತ್ತು. ಅದು ಪೂರ್ವದಲ್ಲಿ ಪಿಸ್ಗಾ ಬೆಟ್ಟದ ಬುಡದವರೆಗೆ ವ್ಯಾಪಿಸಿತ್ತು.</verse>
				<verse number="18">“ಆ ಕಾಲದಲ್ಲಿ ನಾನು ನಿಮಗೆ, ‘ನಿಮ್ಮ ದೇವರಾದ ಸರ್ವೇಶ್ವರ ಈ ಪ್ರದೇಶವನ್ನೇ ನಿಮಗೆ ಸೊತ್ತಾಗಿ ಕೊಟ್ಟಿದ್ದಾರೆ. ಆದರೆ ನಿಮ್ಮ ಯೋಧರೆಲ್ಲರು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಾದ ಇಸ್ರಯೇಲರ ಮುಂದೇ ಹೊರಟು ನದಿ ದಾಟಿ ಹೋಗಬೇಕು.</verse>
				<verse number="19">ನಿಮಗೆ ಬಹಳ ದನಕುರಿಗಳುಂಟೆಂಬುದನ್ನು ನಾನು ಬಲ್ಲೆ. ನಿಮ್ಮ ದೇವರಾದ ಸರ್ವೇಶ್ವರ ಜೋರ್ಡನ್ ನದಿಯ ಆಚೆ ನಿಮ್ಮ ಸಹೋದರರಿಗೆ ಕೊಡುವ ನಾಡು ಅವರಿಗೆ ಸ್ವಾಧೀನವಾಗುವವರೆಗೆ ನಿಮ್ಮ ಮಡದಿ ಮಕ್ಕಳೂ ದನಕುರಿಗಳೂ ನಾನು ನಿಮಗೆ ಕೊಟ್ಟಿರುವ ಪಟ್ಟಣಗಳಲ್ಲೇ ಇರಲಿ.</verse>
				<verse number="20">ಅನಂತರ ನಿಮ್ಮಂತೆ ನಿಮ್ಮ ಸಹೋದರರಿಗೂ ಸರ್ವೇಶ್ವರನಿಂದ ವಿಶ್ರಾಂತಿ ದೊರಕಿದಾಗ ನಿಮ್ಮಲ್ಲಿ ಪ್ರತಿ ಒಬ್ಬನೂ ನಾನು ಕೊಟ್ಟ ಸೊತ್ತಿಗೆ ತಿರುಗಿ ಬರಬಹುದು’ ಎಂದು ಆಜ್ಞಾಪಿಸಿದೆ.</verse>
				<verse number="21">“ಆ ಕಾಲದಲ್ಲಿ ನಾನು ಯೆಹೋಶುವನಿಗೆ, ‘ನಿಮ್ಮ ದೇವರಾದ ಸರ್ವೇಶ್ವರ ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನೇ ನೋಡಿರುವೆ. ನೀನು ನದಿ ದಾಟಿಹೋಗುವ ಎಲ್ಲ ರಾಜ್ಯಗಳನ್ನೂ ಅವರು ಹಾಗೆಯೇ ನಾಶಮಾಡುವರು.</verse>
				<verse number="22">ನೀವು ಅವರಿಗೆ ಭಯಪಡಬೇಡಿ; ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯೇ ನಿಮ್ಮ ಕಡೆಯವರಾಗಿ ಯುದ್ಧಮಾಡುವರು’ ಎಂದು ಆಜ್ಞಾಪಿಸಿದೆ.</verse>
				<verse number="23">:ಆ ಕಾಲದಲ್ಲಿ ನಾನು ಸರ್ವೇಶ್ವರ ಸ್ವಾಮಿಗೆ, ‘ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಮಹತ್ವವನ್ನೂ ಭುಜಬಲವನ್ನೂ ನಿಮ್ಮ ದಾಸನಿಗೆ ತೋರಿಸಲಾರಂಭಿಸಿದಿರಿ. ನೀವು ನಡೆಸುವ ಈ ಮಹತ್ಕಾರ್ಯಗಳಿಗೆ ಸಮಾನವಾದ ಕಾರ್ಯಗಳನ್ನು ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಬೇರೆ ಯಾವ ದೇವರು ತಾನೆ ನಡೆಸಬಲ್ಲನು?</verse>
				<verse number="24"></verse>
				<verse number="25">ಸರ್ವೇಶ್ವರಾ, ನಾನು ಕೂಡ ಈ ನದಿಯನ್ನು ದಾಟಿ, ಆಚೆಯಿರುವ ಒಳ್ಳೆಯ ನಾಡನ್ನು ಅಂದರೆ, ಆ ಅಂದವಾದ ಮಲೆನಾಡನ್ನೂ ಲೆಬನೋನ್ ಪರ್ವತವನ್ನೂ ನೋಡುವುದಕ್ಕೆ ಅಪ್ಪಣೆಯಾಗಲಿ’ ಎಂದು ಭಿನ್ನಯಿಸಿದೆ.</verse>
				<verse number="26">ಆದರೆ ಸರ್ವೇಶ್ವರ ನಿಮ್ಮ ನಿಮಿತ್ತ ನನ್ನ ಮೇಲೆ ಕೋಪಗೊಂಡರು. ನನ್ನ ಮನವಿಯನ್ನು ಕೇಳದೆ, ‘ಸಾಕು; ಇದರ ಬಗ್ಗೆ ಇನ್ನು ನನ್ನ ಸಂಗಡ ಮಾತಾಡಬೇಡ; ನೀನು ಜೋರ್ಡನ್ ನದಿಯನ್ನು ದಾಟಕೂಡದು.</verse>
				<verse number="27">ಆದರೆ ಪಿಸ್ಗಾ ಬೆಟ್ಟವನ್ನು ಹತ್ತಿ, ತುದಿಯಲ್ಲಿ ನಿಂತು, ಚತುರ್ದಿಕ್ಕುಗಳಲ್ಲಿ ಸುತ್ತಲೂ ಇರುವ ನಾಡನ್ನು ಕಣ್ಣು ತುಂಬಾ ನೋಡಬಹುದು.</verse>
				<verse number="28">ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ, ನೀನು ನೋಡುವ ನಾಡನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೇ ಈ ಅಧಿಕಾರವನ್ನು ಕೊಡಬೇಕು; ಅವನು ದೃಢನಾಗುವಂತೆ ಅವನನ್ನು ಧೈರ್ಯಪಡಿಸಬೇಕು,’ ಎಂದು ಉತ್ತರಕೊಟ್ಟರು.</verse>
				<verse number="29">“ಆಗ ನಾವು ಬೇತ್‍ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ವಾಸವಾಗಿದ್ದೆವು.”</verse>
			</chapter>
			<chapter number="4">
				<verse number="1">“ಇಸ್ರಯೇಲರೇ, ಕೇಳಿ; ನೀವು ಜೀವದಿಂದುಳಿದು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳಬೇಕಾದರೆ ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನದಿಂದ ಅನುಸರಿಸಬೇಕು.</verse>
				<verse number="2">ನಿಮ್ಮ ದೇವರಾದ ಸರ್ವೇಶ್ವರ ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಆಜ್ಞೆಗಳನ್ನು ನೀವು ಕೈಗೊಳ್ಳಬೇಕೇ ಹೊರತು ಅವುಗಳಿಗೆ ಏನೂ ಕೂಡಿಸಬಾರದು, ಅವುಗಳಿಂದ ಏನೂ ತೆಗೆದುಬಿಡಬಾರದು.</verse>
				<verse number="3">ಪೆಗೋರದ ಬಾಳ್ ದೇವತೆಯ ವಿಷಯದಲ್ಲಿ ಸರ್ವೇಶ್ವರ ಮಾಡಿದ ಕಾರ್ಯವನ್ನು ನೀವು ನೋಡಿದ್ದೀರಷ್ಟೆ; ಆ ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮಧ್ಯೆಯಿಂದ ನಾಶಮಾಡಿದರಲ್ಲವೆ?</verse>
				<verse number="4">ನಿಮ್ಮ ದೇವರಾದ ಸರ್ವೇಶ್ವರನನ್ನು ಅವಲಂಭಿಸಿದ ನೀವಾದರೋ ಇಂದಿನವರೆಗೂ ಉಳಿದುಕೊಂಡಿದ್ದೀರಿ.</verse>
				<verse number="5">“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಸರ್ವೇಶ್ವರ ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.</verse>
				<verse number="6">ಇವುಗಳನ್ನು ಕೈಗೊಂಡು ಅನುಸರಿಸಿರಿ. ಅನುಸರಿಸಿದ್ದೇ ಆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು; ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, ‘ಈ ದೊಡ್ಡ ಜನಾಂಗ ಎಂಥಾ ಜ್ಞಾನವಿವೇಕವುಳ್ಳ ಜನಾಂಗ’, ಎಂದು ಮಾತಾಡಿಕೊಳ್ಳುವರು.</verse>
				<verse number="7">ನಾವು ಮೊರೆಯಿಡುವಾಗಲೆಲ್ಲಾ ನಮ್ಮ ದೇವರಾದ ಸರ್ವೇಶ್ವರ ನಮಗೆ ಸಮೀಪವಾಗಿರುವಂತೆ ಬೇರೆ ಯಾವ ಜನಾಂಗಕ್ಕೆ, ಅದೆಷ್ಟೇ ದೊಡ್ಡದಾಗಿರಲಿ, ಯಾವ ದೇವರು ಹೀಗೆ ಸಮೀಪವಾಗಿರುತ್ತಾರೆ?</verse>
				<verse number="8">ನಾನು ಈ ದಿನ ನಿಮ್ಮ ಮುಂದಿಡುವ ಇಂಥ ನ್ಯಾಯಯುತವಾದ ಆಜ್ಞಾವಿಧಿಗಳನ್ನು ಒಳಗೊಂಡ ಈ ಧರ್ಮಶಾಸ್ತ್ರಕ್ಕೆ ಸಮಾನವಾದುದು ಬೇರೆ ಯಾವ ಜನಾಂಗಕ್ಕೆ ಉಂಟು?</verse>
				<verse number="9">ಹೀಗಿರುವಲ್ಲಿ, ನೀವು ಬಹಳ ಜಾಗರೂಕತೆಯಿಂದಿರಿ; ನಿಮ್ಮ ಕಣ್ಣುಗಳಿಂದಲೇ ನೋಡಿದ ಘಟನೆಗಳನ್ನು ಎಷ್ಟು ಮಾತ್ರಕ್ಕೂ ಮರೆಯದಿರಿ; ಜೀವಮಾನಪರ್ಯಂತ ಇವುಗಳನ್ನು ನೆನಪಿನಲ್ಲಿ ಇಡಿ; ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಿ,</verse>
				<verse number="10">ಹೋರೇಬಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ನೀವು ನಿಂತಿದ್ದಾಗ ಅವರು ನನಗೆ, ‘ಜನರೆಲ್ಲರನ್ನು ನನ್ನ ಹತ್ತಿರಕ್ಕೆ ಕರೆ; ಅವರೇ ನನ್ನ ಆಜ್ಞೆಗಳನ್ನು ಕೇಳಿಸಿಕೊಳ್ಳಲಿ; ಆಗ ಅವರು ತಮ್ಮ ಜೀವಮಾನದಲ್ಲೆಲ್ಲಾ ನನ್ನಲ್ಲಿ ಭಯಭಕ್ತಿಯಿಂದಿರಲು ಕಲಿತುಕೊಳ್ಳುವರು; ಅಂತೆಯೇ ತಮ್ಮ ಮಕ್ಕಳಿಗೂ ಕಲಿಸಿಕೊಡುವರು,’ ಎಂದರು.</verse>
				<verse number="11">ಅಂದು ನೀವು ಹತ್ತಿರ ಬಂದು ಆ ಬೆಟ್ಟದ ಬುಡದಲ್ಲಿ ನಿಂತುಕೊಂಡಿರಿ. ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರಲು ಅಂತರಿಕ್ಷದವರೆಗೂ ಕರಿಮೋಡವೂ ಕಾರ್ಗತ್ತಲೂ ಆವರಿಸಿದ್ದವು.</verse>
				<verse number="12">ಆ ಅಗ್ನಿಜ್ವಾಲೆಯಿಂದ ಸರ್ವೇಶ್ವರ ನಿಮ್ಮ ಸಂಗಡ ಮಾತಾಡಿದರು. ಆ ವಾಣಿಯ ಶಬ್ದವನ್ನು ನೀವು ಕೇಳಿದಿರಿ. ಆಕಾರ ಯಾವುದೂ ಕಾಣಿಸಲಿಲ್ಲ, ಸ್ವರ ಮಾತ್ರ ಕೇಳಿಸಿತು.</verse>
				<verse number="13">ಆಗ ಅವರು ಹತ್ತು ಆಜ್ಞೆಗಳಿಂದ ಕೂಡಿದ ಒಡಂಬಡಿಕೆಯನ್ನು ಘೋಷಿಸಿದರು, ಅವನ್ನು ಪಾಲಿಸಬೇಕೆಂದರು, ಅವುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಬರೆದರು.</verse>
				<verse number="14">ನೀವು ನದಿದಾಟಿ ಸ್ವಾಧೀನಮಾಡಿಕೊಳ್ಳುವ ನಾಡಿನಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನಿಮಗೆ ಬೋಧಿಸಬೇಕೆಂದು ಅಂದೇ ನನಗೆ ಆಜ್ಞಾಪಿಸಿದರು.</verse>
				<verse number="15">“ಹೋರೇಬಿನಲ್ಲಿ” ಸರ್ವೇಶ್ವರ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದರು. ಆಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ಬಹಳ ಎಚ್ಚರಿಕೆಯಿಂದಿರಿ.</verse>
				<verse number="16">ನೀವು ಭ್ರಷ್ಟರಾಗದಂತೆ ವಿಗ್ರಹಗಳನ್ನು ಮಾಡಿಕೊಳ್ಳಬೇಡಿ. ಸ್ತ್ರೀಪುರುಷರ ರೂಪದಲ್ಲಾಗಲಿ,</verse>
				<verse number="17">ಭೂಮಿಯ ಮೇಲೆ ಸಂಚರಿಸುವ ಮೃಗದ ರೂಪದಲ್ಲಾಗಲಿ, ಆಕಾಶದಲ್ಲಿ ಹಾರಾಡುವ ಪಕ್ಷಿಯ ರೂಪದಲ್ಲಾಗಲಿ,</verse>
				<verse number="18">ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ರೂಪದಲ್ಲಾಗಲಿ, ಭೂಮಿಯ ಕೆಳಗಣ ಮೀನಿನ ರೂಪದಲ್ಲಾಗಲಿ ದೇವರ ಸ್ವರೂಪವೆಂದು ವಿಗ್ರಹಗಳನ್ನು ಮಾಡಿಕೊಳ್ಳಬೇಡಿ.</verse>
				<verse number="19">ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.</verse>
				<verse number="20">ಆದರೆ ನಿಮ್ಮನ್ನು ತಮ್ಮ ಸ್ವಕೀಯ ಜನರನ್ನಾಗಿಸಿಕೊಳ್ಳಲು ಸಂಕಲ್ಪಿಸಿ ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಆ ಈಜಿಪ್ಟ್ ದೇಶದಿಂದ ನಿಮ್ಮನ್ನು ಕರೆದುತಂದು ಇದ್ದಾರೆ ಆ ಸರ್ವೇಶ್ವರ. ಅಂತೆಯೇ ನೀವು ಇಂದಿಗೂ ಅವರ ಸ್ವಂತ ಜನರಾಗಿದ್ದೀರಿ.</verse>
				<verse number="21">“ಇದಲ್ಲದೆ, ಸರ್ವೇಶ್ವರ ನಿಮ್ಮ ದೆಸೆಯಿಂದ ನನ್ನ ಮೇಲೆ ಕೋಪಗೊಂಡರು. ನಾನು ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವನ್ನಾಗಿ ಕೊಡುವ ಆ ಚೆಲುವ ನಾಡನ್ನು ನಾನು ಸೇರಬಾರದೆಂದೂ ಇಲ್ಲಿಯೇ ಸಾಯಬೇಕೆಂದೂ ಖಂಡಿತವಾಗಿ ಹೇಳಿದ್ದಾರೆ.</verse>
				<verse number="22">ನೀವಾದರೋ ನದಿ ದಾಟಿ ಆ ಸುಂದರ ನಾಡನ್ನು ಸೇರಿ ಸ್ವಾಧೀನ ಮಾಡಿಕೊಳ್ಳುವಿರಿ.</verse>
				<verse number="23">“ಎಚ್ಚರಿಕೆಯಾಗಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡಬೇಡಿ. ಅವರು ಪೂಜಿಸಬೇಡಿರೆಂದು ನಿಷೇಧಿಸಿದ ಯಾವ ವಿಗ್ರಹ ವಸ್ತುಗಳನ್ನೂ ಮಾಡಿಕೊಳ್ಳಬೇಡಿ.</verse>
				<verse number="24">ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಕಬಳಿಸಿಬಿಡುವ ಅಗ್ನಿಯಂಥವರು; ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡದ ದೇವರು.</verse>
				<verse number="25">“ನೀವು ಮಕ್ಕಳನ್ನೂ ಮೊಮ್ಮಕ್ಕಳನ್ನೂ ಪಡೆಯುವಷ್ಟು ಕಾಲ ಆ ನಾಡಿನಲ್ಲಿದ್ದು, ಯಾವುದಾದರೊಂದು ವಿಗ್ರಹವನ್ನು ಮಾಡಿಕೊಂಡು ದ್ರೋಹಿಗಳಾಗಿ ನಿಮ್ಮ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ಅವರನ್ನು ಸಿಟ್ಟುಗೊಳಿಸಿದ್ದೇ ಆದರೆ</verse>
				<verse number="26">ಇಗೋ, ಇಂದೇ ನಿಮಗೆ ವಿರುದ್ಧ ಭೂಮ್ಯಾಕಾಶಗಳನ್ನು ಸಾಕ್ಷಿಗಳಾಗಿಟ್ಟು ಹೇಳುತ್ತಿದ್ದೇನೆ: ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳುವ ಆ ನಾಡಿನಲ್ಲಿ ಉಳಿಯದೆ ಬೇಗನೆ ನಾಶವಾಗಿ ಹೋಗುವಿರಿ.</verse>
				<verse number="27">ಸರ್ವೇಶ್ವರ ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿಬಿಡುವರು. ಹೀಗೆ ಓಡಿಸಿಬಿಡಲು, ಆ ಅನ್ಯನಾಡಿನ ಜನರ ನಡುವೆ ನೀವು ಸ್ವಲ್ಪ ಮಂದಿ ಮಾತ್ರ ಅಳಿದುಳಿಯುವಿರಿ.</verse>
				<verse number="28">ಅಲ್ಲಿ ಮಾನವರ ಕೈಯಿಂದ ಮಾಡಲಾದ ಮರ ಮತ್ತು ಕಲ್ಲಿನ ದೇವರುಗಳನ್ನು ಪೂಜಿಸುವಿರಿ; ಅವುಗಳಿಂದ ನೋಡುವುದಕ್ಕಾಗಲಿ, ಕೇಳುವುದಕ್ಕಾಗಲಿ, ತಿನ್ನಲಿಕ್ಕಾಗಲಿ, ಮೂಸುವುದಕ್ಕಾಗಲಿ ಆಗದು.</verse>
				<verse number="29">“ಅಲ್ಲಿಂದಾದರೂ ನೀವು ಪೂರ್ಣಹೃದಯದಿಂದ, ಪೂರ್ಣಮನಸ್ಸಿನಿಂದ ನಿಮ್ಮ ದೇವರಾದ ಸರ್ವೇಶ್ವರನನ್ನು ಅರಸಿದರೆ ಅವರು ನಿಮಗೆ ಸಿಗುವರು.</verse>
				<verse number="30">ಮೇಲೆ ಹೇಳಿದ ಎಲ್ಲ ಕಷ್ಟಸಂಕಟಗಳು ನಿಮಗೆ ಸಂಭವಿಸಿ, ಕೊನೆಗೆ ನೀವು ಅವರಿಗೆ ಅಭಿಮುಖರಾಗಿ ಅವನ ಮಾತಿಗೆ ಕಿವಿಗೊಡುವಿರಿ.</verse>
				<verse number="31">ನಿಮ್ಮ ದೇವರಾದ ಸರ್ವೇಶ್ವರ ದಯಾಮಯ ದೇವರು. ಅವರು ನಿಮ್ಮನ್ನು ಅಲಕ್ಷ್ಯ ಮಾಡುವುದಿಲ್ಲ. ವಿನಾಶಕ್ಕೆ ಬಿಟ್ಟುಬಿಡುವುದಿಲ್ಲ. ನಿಮ್ಮ ಪೂರ್ವಜರ ಸಂಗಡ ಅವರು ಪ್ರಮಾಣಪೂರ್ವಕವಾಗಿ ಮಾಡಿಕೊಂಡ ಒಡಂಬಡಿಕೆಯನ್ನು ಮರೆತುಬಿಡುವುದಿಲ್ಲ.</verse>
				<verse number="32">“ದೇವರು ಮಾನವರನ್ನು ಸೃಷ್ಟಿಸಿ ಭೂಮಿಯ ಮೇಲಿರಿಸಿದ ದಿನ ಮೊದಲ್ಗೊಂಡು ಇಂದಿನವರೆಗೆ, ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೆ, ಅಂಥ ಅದ್ಭುತಕಾರ್ಯ ನಡೆದದ್ದುಂಟೇ? ಅಂಥ ಸುದ್ದಿಯನ್ನಾದರೂ ಕೇಳಿದ್ದುಂಟೇ? ನೀವೇ ವಿಚಾರಿಸಿಕೊಳ್ಳಿ.</verse>
				<verse number="33">ದೇವರು ಅಗ್ನಿಜ್ವಾಲೆಯೊಳಗಿಂದ ಮಾತಾಡಿದ ಸ್ವರ ಕೇಳಿಸಿತಲ್ಲವೆ? ಬೇರೆ ಯಾವ ಜನರಾದರು ದೇವರ ಸ್ವರ ಕೇಳಿ ಬದುಕಿದ್ದುಂಟೇ?</verse>
				<verse number="34">ಬೇರೆ ಯಾವ ದೇವರು ತಾನೆ ಪರಿಶೋಧನೆ, ಪವಾಡ, ಮಹತ್ಕಾರ್ಯ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಭಯಂಕರಕಾರ್ಯ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯಿಂದ ತಪ್ಪಿಸಲು ಪ್ರಯತ್ನಿಸಿದ್ದಾರೆ? ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿಯಾದರೊ ಈಜಿಪ್ಟಿನಲ್ಲಿ ನಿಮ್ಮ ಪರವಾಗಿ, ಇದನ್ನೆಲ್ಲ ನಿಮ್ಮ ಕಣ್ಮುಂದೆಯೇ, ನಡೆಸಿದರಲ್ಲವೆ?</verse>
				<verse number="35">ಸರ್ವೇಶ್ವರ ಸ್ವಾಮಿಯೊಬ್ಬರೇ ದೇವರು, ಬೇರೆ ದೇವರೇ ಇಲ್ಲವೆಂದು ನೀವು ಅರಿತುಕೊಳ್ಳುವುದಕ್ಕಾಗಿ ಇದನ್ನೆಲ್ಲಾ ನಿಮಗೆ ಮಾತ್ರ ತೋರಿಸಲಾಗಿದೆ.</verse>
				<verse number="36">ನೀವು ಕಲಿತುಕೊಳ್ಳಬೇಕೆಂದೇ ಸರ್ವೇಶ್ವರ ಆಕಾಶದಿಂದ ತಮ್ಮ ಸ್ವರ ನಿಮಗೆ ಕೇಳಿಸುವ ಹಾಗೆ ಮಾಡಿದರು; ತಾವಿದ್ದ ಮಹಾ ಅಗ್ನಿಜ್ವಾಲೆಯನ್ನು ಭೂಮಿಯ ಮೇಲೆ ನೀವು ನೋಡುವಂತೆ ಮಾಡಿದರು; ಆ ಅಗ್ನಿಜ್ವಾಲೆಯ ಒಳಗಿಂದ ಅವರು ಆಡಿದ ಮಾತುಗಳನ್ನು ನೀವು ಕೇಳಿದಿರಿ.</verse>
				<verse number="37">ನಿಮ್ಮ ಪಿತೃಗಳನ್ನು ಪ್ರೀತಿಸಿ, ತರುವಾಯ ಅವರ ಸಂತತಿಯಾದ ನಿಮ್ಮನ್ನೂ ಆರಿಸಿಕೊಂಡರು.</verse>
				<verse number="38">ಈಗ ನಮಗೆ ತಿಳಿದಿರುವಂತೆ ನಿಮಗಿಂತ ದೊಡ್ಡವೂ ಬಲಿಷ್ಠವೂ ಆದ ಜನಾಂಗಗಳನ್ನು ಹೊರಡಿಸಿ ಅವರ ನಾಡಲ್ಲೆ ನಿಮ್ಮನ್ನು ಸೇರಿಸಿ, ಆ ನಾಡನ್ನು ನಿಮಗೇ ಸ್ವಂತ ನಾಡನ್ನಾಗಿ ಕೊಡಲು ಸಂಕಲ್ಪಿಸಿದ್ದಾರೆ. ತಾವೇ ನಿಮ್ಮೊಂದಿಗಿದ್ದು, ತಮ್ಮ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಈಜಿಪ್ಟ್ ದೇಶದಿಂದ ಕರೆದುತಂದಿದ್ದಾರೆ.</verse>
				<verse number="39">ನೀವು ಇದನ್ನೆಲ್ಲಾ ಆಲೋಚಿಸಿ, ಮೇಲೆ ಆಕಾಶದಲ್ಲಾಗಲಿ, ಕೆಳಗೆ ಭೂಮಿಯಲ್ಲಾಗಲಿ ಸರ್ವೇಶ್ವರಸ್ವಾಮಿ ಒಬ್ಬರೇ ದೇವರು, ಬೇರೆ ಯಾವ ದೇವರೂ ಇಲ್ಲವೆಂಬುದನ್ನು ಈಗ ಗ್ರಹಿಸಿಕೊಂಡು ಜ್ಞಾಪಕದಲ್ಲಿ ಇಡಬೇಕು.</verse>
				<verse number="40">ನಾನು ಇಂದು ನಿಮಗೆ ತಿಳಿಸಿದ ಅವರ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಿರಿ. ಆಗ ನಿಮಗೂ ನಿಮ್ಮ ಸಂತತಿಗೂ ಶುಭವುಂಟಾಗುವುದು; ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶಾಶ್ವತವಾಗಿ ಕೊಡುವ ನಾಡಿನಲ್ಲಿ ನೀವು ದೀರ್ಘಕಾಲ ಬಾಳುವಿರಿ.”</verse>
				<verse number="41">ಆ ಕಾಲದಲ್ಲಿ ಮೋಶೆ ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಿದನು.</verse>
				<verse number="42">ಪೂರ್ವಕಲ್ಪಿತ ಯಾವ ದ್ವೇಷವೂ ಇಲ್ಲದೆ, ಕೈತಪ್ಪಿ, ಮತ್ತೊಬ್ಬನನ್ನು ಕೊಂದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಲಿ ಎಂದು ಆ ನಗರಗಳನ್ನು ನೇಮಿಸಿದನು.</verse>
				<verse number="43">ರೂಬೇನ್ಯರಿಗಾಗಿ ಮೀಶೋರ್ ಎಂಬ ಎತ್ತರವಾದ ಬಯಲು ಸೀಮೆಯ ಮರುಭೂಮಿಯಲ್ಲಿ ಇದ್ದ ಬೆಚೆರ್, ಗಾದ್ಯರಿಗಾಗಿ ಗಿಲ್ಯಾದಿನಲ್ಲಿದ್ದ ರಾಮೋತ್, ಹಾಗು ಮನಸ್ಸೆಯವರಿಗಾಗಿ ಬಾಷಾನಿನಲ್ಲಿದ್ದ ಗೋಲಾನ್ ಇವೇ ಆ ಆಶ್ರಯನಗರಗಳು.</verse>
				<verse number="44">ಮೋಶೆ ಇಸ್ರಯೇಲರಿಗೆ ಕೊಟ್ಟ ಧರ್ಮಶಾಸ್ತ್ರ:</verse>
				<verse number="45">ಇಸ್ರಯೇಲರು ಈಜಿಪ್ಟ್ ದೇಶದಿಂದ ಬಂದಾಗ ಮೋಶೆ ಅವರಿಗೆ ತಿಳಿಸಿದ ಆಜ್ಞಾವಿಧಿನಿರ್ಣಯಗಳು ಇವು:</verse>
				<verse number="46">ಜೋರ್ಡನ್ ನದಿಯ ಆಚೆ ಬೇತ್ ಪೆಗೋರಿಗೆ ಎದುರಾಗಿರುವ ಕಣಿವೆಯ ಹೆಷ್ಬೋನಿನಲ್ಲಿ ವಾಸಿಸಿದ ಅಮೋರಿಯರ ಅರಸ ಸೀಹೋನನ ದೇಶದಲ್ಲಿ ಇದು ನಡೆಯಿತು. ಮೋಶೆಯೂ ಇಸ್ರಯೇಲರೂ ಈಜಿಪ್ಟಿನಿಂದ ಬಂದಾಗ ಆ ಸೀಹೋನನನ್ನು ಜಯಿಸಿದ್ದರು.</verse>
				<verse number="47">ಅವನ ರಾಜ್ಯವನ್ನೂ ಬಾಷಾನ್ ದೇಶದ ಅರಸ ಓಗನ ರಾಜ್ಯವನ್ನೂ ಜೋರ್ಡನ್ ನದಿಯ ಆಚೆ ಪೂರ್ವದಿಕ್ಕಿನಲ್ಲಿದ್ದ ಅಮೋರಿಯರ ಇಬ್ಬರು ಅರಸರ ರಾಜ್ಯಗಳನ್ನೂ ಗೆದ್ದುಕೊಂಡಿದ್ದರು.</verse>
				<verse number="48">ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣ ಮೊದಲ್ಗೊಂಡು ಹೆರ್ಮೋನ್ ಎಂಬ ಸೀಯೋನ್ ಪರ್ವತದವರೆಗೂ</verse>
				<verse number="49">ಅರಾಬ ಎಂಬ ತಗ್ಗಿನಲ್ಲಿ ಪಿಸ್ಗಾ ಬೆಟ್ಟದ ಬುಡದಲ್ಲಿ ಇರುವ ಅರಾಬದ ಸಮುದ್ರದವರೆಗೆ ಜೋರ್ಡನ್ ನದಿಯ ಆಚೆ ಇರುವ ಭಾಗವನ್ನೆಲ್ಲಾ ಸ್ವಾಧೀನ ಮಾಡಿಕೊಂಡಿದ್ದರು.</verse>
			</chapter>
			<chapter number="5">
				<verse number="1">ಮೋಶೆ ಇಸ್ರಯೇಲರನ್ನು ಕರೆದು ಹೀಗೆ ಸಂಬೋಧಿಸಿದನು: “ಇಸ್ರಯೇಲರೇ, ನಾನು ಈಗ ನಿಮಗೆ ತಿಳಿಸಲಿರುವ ಆಜ್ಞಾವಿಧಿಗಳನ್ನು ಕಿವಿಗೊಟ್ಟು ಕೇಳಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಿರಿ.</verse>
				<verse number="2">ನಮ್ಮ ದೇವರಾದ ಸರ್ವೇಶ್ವರ ಹೋರೇಬಿನಲ್ಲಿ ನಮ್ಮೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು.</verse>
				<verse number="3">ನಮ್ಮ ಪೂರ್ವಿಕರ ಸಂಗಡ ಈ ಒಡಂಬಡಿಕೆಯನ್ನು ಮಾಡದೆ ಈಗ ಇಲ್ಲಿ ಜೀವದಿಂದಿರುವ ನಮ್ಮ ಸಂಗಡವೇ ಇದನ್ನು ಮಾಡಿದರು.</verse>
				<verse number="4">ಸರ್ವೇಶ್ವರ ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ಮುಖಾಮುಖಿಯಾಗಿ ನಮ್ಮೊಂದಿಗೆ ಮಾತಾಡಿದರು.</verse>
				<verse number="5">ನೀವು ಆ ಅಗ್ನಿಜ್ವಾಲೆಯನ್ನು ನೋಡಿ ಭಯಪಟ್ಟಿರಿ; ಬೆಟ್ಟವನ್ನು ಹತ್ತದೆ ಹೋದಿರಿ! ಆಗ ನಾನು ಸರ್ವೇಶ್ವರನಿಗೂ ನಿಮಗೂ ನಡುವೆ ನಿಂತು ಅವರು ನುಡಿದ ಮಾತುಗಳನ್ನು ನಿಮಗೆ ತಿಳಿಸಿದೆನು. ಅವರು ನುಡಿದದ್ದು ಇದು:</verse>
				<verse number="6">‘ನಾನೇ ನಿನ್ನ ದೇವರಾದ ಸರ್ವೇಶ್ವರ; ಗುಲಾಮತನದ ನಾಡಾಗಿದ್ದು, ಈಜಿಪ್ಟಿನಿಂದ ನಿನ್ನನ್ನು ಬಿಡುಗಡೆ ಮಾಡಿದವನು.</verse>
				<verse number="7">ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಕೂಡದು.</verse>
				<verse number="8">‘ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಿನ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಅಥವಾ ವಿಗ್ರಹವನ್ನೂ ಮಾಡಿಕೊಳ್ಳಬೇಡ.</verse>
				<verse number="9">ಅವುಗಳಿಗೆ ಅಡ್ಡಬೀಳಬೇಡ. ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ, ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬನಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಹೆತ್ತವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.</verse>
				<verse number="10">ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುತ್ತೇನೆ.</verse>
				<verse number="11">‘ನಿನ್ನ ದೇವರಾದ ಸರ್ವೇಶ್ವರನ ಹೆಸರನ್ನು ದುರುಪಯೋಗಿಸಿಕೊಳ್ಳಬೇಡ. ಏಕೆಂದರೆ ಸರ್ವೇಶ್ವರನಾದ ನಾನು ನನ್ನ ಹೆಸರನ್ನು ದುರುಪಯೋಗಿಸಿಕೊಳ್ಳುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.</verse>
				<verse number="12">‘ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ಆಜ್ಞಾಪಿಸಿದಂತೆ ನೀನು ವಿಶ್ರಾಂತಿ ದಿನವನ್ನು ಪವಿತ್ರವಾಗಿ ಆಚರಿಸು.</verse>
				<verse number="13">ಆರು ದಿನಗಳು ದುಡಿದು ನಿನ್ನ ಕೆಲಸವನ್ನೆಲ್ಲ ಮಾಡು.</verse>
				<verse number="14">ಏಳನೆಯ ದಿನ ನಿನ್ನ ದೇವರಾದ ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನ. ಅಂದು ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಹೆಣ್ಣು ಮಕ್ಕಳು, ನಿನ್ನ ಗಂಡುಹೆಣ್ಣು ಆಳುಗಳು, ಎತ್ತುಕತ್ತೆಗಳು, ಪಶುಪ್ರಾಣಿಗಳು, ಹಾಗು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು.</verse>
				<verse number="15">ಈಜಿಪ್ಟ್ ದೇಶದಲ್ಲಿ ನೀವೂ ಗುಲಾಮತನದಲ್ಲಿದ್ದುದನ್ನೂ ನಿಮ್ಮ ದೇವರಾದ ಸರ್ವೇಶ್ವರ ಭುಜಪರಾಕ್ರಮದಿಂದ ಹಾಗು ಶಿಕ್ಷಾಹಸ್ತದಿಂದ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ನೆನಪಿಗೆ ತಂದುಕೊಳ್ಳಿ. ನೀವು ವಿಶ್ರಾಂತಿ ದಿನವನ್ನು ಆಚರಿಸಬೇಕೆಂಬುದನ್ನು ನಿಮ್ಮ ದೇವರಾದ ಸರ್ವೇಶ್ವರ ಇದಕ್ಕಾಗಿಯೇ ಆಜ್ಞಾಪಿಸಿದ್ದಾರೆ.</verse>
				<verse number="16">‘ನಿನ್ನ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆ, ನಿನ್ನ ತಂದೆತಾಯಿಗಳನ್ನು ಗೌರವಿಸು; ಗೌರವಿಸಿದರೆ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನಗೆ ಅನುಗ್ರಹಿಸುವ ನಾಡಿನಲ್ಲಿ ಬಹುಕಾಲ ಸುಕ್ಷೇಮವಾಗಿ ಬಾಳುವೆ.</verse>
				<verse number="17">‘ಕೊಲೆ ಮಾಡಬೇಡ;</verse>
				<verse number="18">‘ವ್ಯಭಿಚಾರ ಮಾಡಬೇಡ;</verse>
				<verse number="19">‘ಕದಿಯಬೇಡ;</verse>
				<verse number="20">‘ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳಬೇಡ;</verse>
				<verse number="21">‘ನೆರೆಯವನ ಹೆಂಡತಿಯನ್ನು ಅಪೇಕ್ಷಿಸಬೇಡ; ಅವನ ಮನೆ, ಹೊಲ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು,.</verse>
				<verse number="22">“ಈ ಮಾತುಗಳನ್ನು ಸರ್ವೇಶ್ವರ ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು, ಇವುಗಳ ಮಧ್ಯೆ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾಸ್ವರದಿಂದ ನುಡಿದರು; ಬೇರೆ ಏನನ್ನೂ ಕೂಡಿಸದೆ, ಈ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಬರೆದು ನನಗೆ ಕೊಟ್ಟರು.</verse>
				<verse number="23">“ಆ ಬೆಟ್ಟ ಬೆಂಕಿಯಿಂದ ಪ್ರಜ್ವಲಿಸುತ್ತಿರುವಾಗ, ಆ ಕತ್ತಲೊಳಗಿಂದ ದೇವರ ಸ್ವರ ಕೇಳಿ ಬಂದಾಗ, ನೀವು, ನಿಮ್ಮ ಕುಲಾಧಿಪತಿಗಳು, ಹಿರಿಯರು ನನ್ನ ಬಳಿಗೆ ಬಂದಿರಿ.</verse>
				<verse number="24">‘ಇಗೋ, ನಮ್ಮ ದೇವರಾದ ಸರ್ವೇಶ್ವರ ತಮ್ಮ ಪ್ರತಿಭೆಯನ್ನೂ ಮಹಿಮೆಯನ್ನೂ ನಮಗೆ ತೋರಿಸಿದ್ದಾರೆ; ಅಗ್ನಿಜ್ವಾಲೆಯೊಳಗಿಂದ ತಮ್ಮ ಸ್ವರವನ್ನು ನಮಗೆ ಕೇಳಿಸಿದ್ದಾರೆ; ದೇವರು ಮನುಷ್ಯನೊಡನೆ ಮಾತಾಡಿದ್ದನ್ನೂ, ಆದರೂ ಆ ಮನುಷ್ಯ ಸಾಯದೆ ಬದುಕಿರುವುದನ್ನೂ ಇಂದು ನಾವು ಕಂಡೆವು.</verse>
				<verse number="25">ಹಾಗಿದ್ದರೂ ಈಗ ನಾವೇಕೆ ಪ್ರಾಣಾಪಾಯಕ್ಕೆ ಗುರಿಯಾಗಬೇಕು? ಬಹುಶಃ ಈ ಘೋರ ಬೆಂಕಿ ನಮ್ಮನ್ನು ದಹಿಸಿಬಿಡಬಹುದು; ನಮ್ಮ ದೇವರಾದ ಸರ್ವೇಶ್ವರನ ಸ್ವರವನ್ನು ನಾವು ಮತ್ತೆ ಕೇಳಿದರೆ ಸಾಯಬಹುದು.</verse>
				<verse number="26">ಅಗ್ನಿಜ್ವಾಲೆಯೊಳಗಿಂದ ಮಾತಾಡುವ ಚೈತನ್ಯಸ್ವರೂಪರಾದ ದೇವರ ಸ್ವರವನ್ನು ನಮ್ಮಂತೆ ಕೇಳಿಯೂ ಬದುಕಿರುವ ಮಾನವ ಯಾರಿದ್ದಾನೆ?</verse>
				<verse number="27">ನೀನೇ ಹತ್ತಿರಕ್ಕೆ ಹೋಗಿ, ನಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ಅದರಂತೆ ನಡೆಯುತ್ತೇವೆ’ ಎಂದು ಹೇಳಿದಿರಿ.</verse>
				<verse number="28">“ನೀವು ನನಗೆ ಹೇಳಿದ ಈ ಮಾತುಗಳನ್ನು ಸರ್ವೇಶ್ವರಸ್ವಾಮಿ ಕೇಳಿ ನನಗೆ ಹೀಗೆಂದರು: ‘ಈ ಜನರು ನಿನಗೆ ಹೇಳಿದ ಮಾತುಗಳನ್ನು ಕೇಳಿದ್ದೇನೆ; ಅವರು ಹೇಳಿದ್ದು ಸರಿಯಾಗಿದೆ.</verse>
				<verse number="29">ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಸದಾ ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು; ಆಗ ಅವರಿಗೂ ಅವರ ಸಂತತಿಗೂ ಯಾವಾಗಲೂ ಶುಭವುಂಟಾಗುವುದು.</verse>
				<verse number="30">ನೀನು ಹೋಗಿ ಅವರಿಗೆ, ‘ನಿಮ್ಮ ನಿಮ್ಮ ಡೇರೆಗಳಿಗೆ ಹಿಂದಿರುಗಿರಿ’, - ಎಂದು ಆಜ್ಞಾಪಿಸು.</verse>
				<verse number="31">ನೀನು ಇಲ್ಲೇ ನನ್ನ ಬಳಿ ಇರು; ಅವರಿಗೆ ಬೋಧಿಸಬೇಕಾದ ಎಲ್ಲ ಆಜ್ಞೆಗಳನ್ನೂ ವಿಧಿನಿರ್ಣಯಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ನಾಡಿನಲ್ಲಿ ಅವರು ಅವುಗಳನ್ನು ಅನುಸರಿಸಬೇಕು,’ ಎಂದು ಹೇಳಿದರು.</verse>
				<verse number="32">“ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆಯೇ ನಡೆದುಕೊಳ್ಳಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬೇಡಿ. ಬದಲಿಗೆ, ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದ ಮಾರ್ಗದಲ್ಲೇ ಮುನ್ನಡೆಯಿರಿ.</verse>
				<verse number="33">ಆಗ, ನೀವು ಸ್ವಾಧೀನಪಡಿಸಿಕೊಳ್ಳಲಿರುವ ನಾಡಿನಲ್ಲಿ ದೀರ್ಘಕಾಲ ಸುಕ್ಷೇಮದಿಂದ ಬಾಳುವಿರಿ.”</verse>
			</chapter>
			<chapter number="6">
				<verse number="1">“ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿ ನಿಮಗೆ ಬೋಧಿಸಲು ನನಗೆ ಆಜ್ಞಾಪಿಸಿದ ಈ ಧರ್ಮೋಪದೇಶವನ್ನೂ ವಿಧಿನಿರ್ಣಯಗಳನ್ನೂ ನೀವು ನದಿದಾಟಿ ಸ್ವಾಧೀನಪಡಿಸಿಕೊಳ್ಳಲಿರುವ ಆ ನಾಡಿನಲ್ಲಿ ಅನುಸರಿಸಬೆಕು.</verse>
				<verse number="2">ನೀವು ಹಾಗು ನಿಮ್ಮ ಪುತ್ರಪೌತ್ರಾದಿ ಸಂತತಿಯವರು ಜೀವಮಾನದಲ್ಲೆಲ್ಲಾ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಈಗ ಬೋಧಿಸುವ ಅವರ ವಿಧಿನಿರ್ಣಯಗಳನ್ನೆಲ್ಲಾ ಅನುಸರಿಸಬೇಕು; ಆಗ ನೀವು ದೀರ್ಘಕಾಲ ಬಾಳುವಿರಿ. ಅದಕ್ಕಾಗಿಯೇ ಇವುಗಳನ್ನು ಆಜ್ಞಾಪಿಸಿದ್ದಾರೆ.</verse>
				<verse number="3">ಆದುದರಿಂದ ಇಸ್ರಯೇಲರೇ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ವಾಗ್ದಾನ ಮಾಡಿದ ಪ್ರಕಾರ, ಹಾಲೂಜೇನೂ ಹರಿಯುವ ಆ ನಾಡಿನಲ್ಲಿ ನಿಮಗೆ ಶುಭವುಂಟಾಗುವಂತೆ, ನೀವು ಬಹಳವಾಗಿ ಹೆಚ್ಚಿ, ಅಭಿವೃದ್ಧಿಯಾಗುವಂತೆ, ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಿರಿ.</verse>
				<verse number="4">“ಇಸ್ರಯೇಲ್ ಜನಾಂಗವೇ ಕೇಳು; ನಿನ್ನ ದೇವರಾದ ಸರ್ವೇಶ್ವರ ಸ್ವಾಮಿ ಒಬ್ಬರೇ ದೇವರು.</verse>
				<verse number="5">ನಿನ್ನ ಪೂರ್ಣಹೃದಯದಿಂದ, ಪೂರ್ಣಪ್ರಾಣದಿಂದ, ಪೂರ್ಣಶಕ್ತಿಯಿಂದ ನಿನ್ನ ದೇವರಾದ ಸರ್ವೇಶ್ವರನನ್ನು ಪ್ರೀತಿಸು.</verse>
				<verse number="6">ಈ ದಿನ ನಾನು ನಿನಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿ ನಾಟಿರಲಿ.</verse>
				<verse number="7">ಇವುಗಳನ್ನು ನಿನ್ನ ಮಕ್ಕಳಿಗೆ ಮನದಟ್ಟಾಗಿಸು; ಮನೆಯಲ್ಲಿರುವಾಗಲು, ಪ್ರಯಾಣದಲ್ಲಿರುವಾಗಲು, ಮಲಗುವಾಗಲು, ಏಳುವಾಗಲು ಇವುಗಳನ್ನು ಕುರಿತು ಪಾಠಹೇಳು.</verse>
				<verse number="8">ಜ್ಞಾಪಕಾರ್ಥವಾಗಿ ಅವುಗಳನ್ನು ನಿನ್ನ ಕೈಗೆ ಕಟ್ಟಿಕೊ; ಜ್ಞಾಪಕ ಪಟ್ಟಿಯಂತೆ ಹಣೆಗೆ ತೊಟ್ಟುಕೊ.</verse>
				<verse number="9">ನಿನ್ನ ಮನೆ ಬಾಗಿಲಿನ ನಿಲುವುಪಟ್ಟಿಗಳಲ್ಲೂ ತಲೆಬಾಗಿಲಿನ ಮೇಲೂ ಅವುಗಳನ್ನು ಬರೆ.</verse>
				<verse number="10">“ನಿನ್ನ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ನಿನ್ನ ದೇವರಾದ ಸರ್ವೇಶ್ವರ ಪ್ರಮಾಣಮಾಡಿದ ನಾಡಿಗೆ ನಿನ್ನನ್ನು ಸೇರಿಸಿದಾಗ,</verse>
				<verse number="11">ನೀನು ಕಟ್ಟದ ಸುಂದರವಾದ ದೊಡ್ಡ ಪಟ್ಟಣಗಳನ್ನು, ನೀನು ಕೂಡಿಸದ ಉತ್ತಮೋತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನು, ನೀನು ತೋಡದ ನೀರುಗುಂಡಿಗಳನ್ನು, ನೀನು ಬೆಳಸದ ದ್ರಾಕ್ಷಿತೋಟಗಳನ್ನು ಹಾಗು ಎಣ್ಣೆಮರಗಳನ್ನು ಅನುಭವಿಸುತ್ತಾ ತೃಪ್ತನಾಗಿ ಇರುವೆ.</verse>
				<verse number="12">ಈಜಿಪ್ಟ್ ದೇಶದಲ್ಲಿ ಗುಲಾಮನಾಗಿದ್ದ ನಿನ್ನನ್ನು ಬಿಡುಗಡೆ ಮಾಡಿದ ಸರ್ವೇಶ್ವರನನ್ನು ಆಗ ಮರೆತುಬಿಡದಂತೆ ಎಚ್ಚರಿಕೆಯಿಂದಿರು.</verse>
				<verse number="13">ನಿನ್ನ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಾಗಿರು; ಅವರಿಗೇ ಸೇವೆಮಾಡು; ಅವರ ಹೆಸರು ಹೇಳಿ ಪ್ರಮಾಣಮಾಡು.</verse>
				<verse number="14">ಸುತ್ತಮುತ್ತಲಿರುವ ಜನಾಂಗಗಳು ಹಿಂಬಾಲಿಸುವ ದೇವರುಗಳನ್ನು ನೀನು ಆರಾಧಿಸಬಾರದು.</verse>
				<verse number="15">ನಿಮ್ಮ ಮಧ್ಯೆಯಿರುವ ನಿಮ್ಮ ದೇವರಾದ ಸರ್ವೇಶ್ವರ ತಮಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸದ ದೇವರು; ಅವರು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂಮಿಯ ಮೇಲೆ ಉಳಿಯದಂತೆ ನಾಶಮಾಡಬಹುದು.</verse>
				<verse number="16">“ಮಸ್ಸದಲ್ಲಿ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮಾಡಿದಂತೆ ಇನ್ನು ಮುಂದೆ ಮಾಡಬೇಡಿ.</verse>
				<verse number="17">ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ನೇಮಿಸಿದ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಲೇಬೇಕು.</verse>
				<verse number="18">ಸರ್ವೇಶ್ವರನ ದೃಷ್ಟಿಯಲ್ಲಿ ಯಾವುದು ನ್ಯಾಯವೋ, ಯೋಗ್ಯವೋ ಅದನ್ನೇ ಮಾಡಬೇಕು. ಹೀಗೆ ನಡೆದರೆ ನಿಮಗೆ ಶುಭ ಉಂಟಾಗುವುದು ಮತ್ತು ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ಉತ್ತಮ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.</verse>
				<verse number="19">ಅಲ್ಲದೆ, ಅವರೇ ಮಾತುಕೊಟ್ಟಿರುವಂತೆ ನಿಮ್ಮ ಶತ್ರುಗಳನ್ನು ನಿಮ್ಮ ಮುಂದೆಯೇ ತೊಲಗಿಸುವರು.</verse>
				<verse number="20">“ಇನ್ನು ಮುಂದೆ ನಿಮ್ಮ ಮಕ್ಕಳು, ‘ಈ ಆಜ್ಞಾವಿಧಿನಿರ್ಣಯಗಳನ್ನು ನಮ್ಮ ದೇವರಾದ ಸರ್ವೇಶ್ವರ ಏಕೆ ನೇಮಿಸಿದರು?’ ಎಂದು ವಿಚಾರಿಸುವರು.</verse>
				<verse number="21">ಆಗ ನೀವು ಅವರಿಗೆ, ‘ನಾವು ಈಜಿಪ್ಟಿನಲ್ಲಿ ಫರೋಹನಿಗೆ ಗುಲಾಮರಾಗಿ ಇದ್ದೆವು. ಸರ್ವೇಶ್ವರ ತಮ್ಮ ಭುಜಬಲದಿಂದ ನಮ್ಮನ್ನು ಬಿಡುಗಡೆ ಮಾಡಿದರು;</verse>
				<verse number="22">ಭಯಂಕರ ಆದ ಮಹತ್ಕಾರ್ಯಗಳಿಂದ ಮತ್ತು ಸೂಚಕಕಾರ್ಯಗಳಿಂದ ಈಜಿಪ್ಟಿನವರನ್ನೂ ಫರೋಹನನ್ನೂ ಅವನ ಮನೆಯವರನ್ನೂ ನಮ್ಮ ಕಣ್ಣೆದುರಿನಲ್ಲೇ ಶಿಕ್ಷಿಸಿದರು.</verse>
				<verse number="23">ನಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ನಾಡಿಗೆ ನಮ್ಮನ್ನು ಸೇರಿಸುವುದಕ್ಕೆ ಈಜಿಪ್ಟಿನಿಂದ ನಮ್ಮನ್ನು ಬರಮಾಡಿದರು.</verse>
				<verse number="24">ಈ ಕಾರಣದಿಂದಲೇ ಈ ನಿಯಮಗಳನ್ನೆಲ್ಲಾ ಆಚರಿಸಬೇಕೆಂದು ನಮಗೆ ಅಪ್ಪಣೆಮಾಡಿದ್ದಾರೆ. ಸದಾ ಶುಭವುಂಟಾಗಬೇಕಾದರೆ, ಅವರು ಎಂದಿನಂತೆ ನಮ್ಮ ಪ್ರಾಣಗಳನ್ನು ಕಾಪಾಡಬೇಕಾದರೆ ನಾವು ನಮ್ಮ ದೇವರಾದ ಸರ್ವೇಶ್ವರನಿಗೆ ಭಯಭಕ್ತಿಯುಳ್ಳವರಾಗಿರಬೇಕು.</verse>
				<verse number="25">ನಮ್ಮ ದೇವರಾದ ಸರ್ವೇಶ್ವರ ನಿರೂಪಿಸಿದ ಈ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಅವರ ದೃಷ್ಟಿಯಲ್ಲಿ ನೀತಿವಂತರೆಂದು ಪರಿಗಣಿತರಾಗುವೆವು,’ ಎಂದು ನೀವು ಉತ್ತರಕೊಡಬೇಕು.</verse>
			</chapter>
			<chapter number="7">
				<verse number="1">“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿ, ಸಂಖ್ಯೆಯಲ್ಲೂ ಶಕ್ತಿಯಲ್ಲೂ ನಿಮ್ಮನ್ನು ಮೀರುವ ಜನಾಂಗಗಳನ್ನು ಅಲ್ಲಿಂದ ನಿಮ್ಮ ಮುಂದೆಯೆ ಹೊರಡಿಸುವರು.</verse>
				<verse number="2">ಅಂಥ ಏಳು ಜನಾಂಗಗಳು ಯಾವುವೆಂದರೆ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಹಾಗು ಯೆಬೂಸಿಯರು. ಅವರನ್ನು ನೀವು ಸೋಲಿಸಿ ವಿನಾಶ ಶಾಪಗ್ರಸ್ತರನ್ನಾಗಿಸಬೇಕು. ಅವರ ಸಂಗಡ ಒಪ್ಪಂದಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು,</verse>
				<verse number="3">ಅವರೊಡನೆ ಬೀಗತನ ಮಾಡಬಾರದು; ಅವರ ಮಕ್ಕಳಿಗೆ ಹೆಣ್ಣುಗಳನ್ನು ಕೊಡಲೂಬಾರದು, ಅವರಿಂದ ತರಲೂಬಾರದು.</verse>
				<verse number="4">ಹಾಗೆ ಮಾಡಿದರೆ ಅವರು ನಿಮ್ಮ ಮಕ್ಕಳನ್ನು ಸರ್ವೇಶ್ವರನಿಂದ ವಿಮುಖಗೊಳಿಸಿ ಇತರ ದೇವರುಗಳನ್ನು ಪೂಜಿಸುವಂತೆ ಮಾಡಬಹುದು. ಆಗ ಸರ್ವೇಶ್ವರ ನಿಮ್ಮ ಮೇಲೆ ಕೋಪಗೊಂಡು ಬೇಗನೆ ನಿಮ್ಮನ್ನು ನಾಶಮಾಡುವರು.</verse>
				<verse number="5">ಆದುದರಿಂದ ನೀವು ಹೀಗೆ ಮಾಡಬೇಕು; ಅವರ ಯಜ್ಞವೇದಿಗಳನ್ನು ಕೆಡವಬೇಕು, ಅವರ ಪವಿತ್ರಶಿಲೆಗಳನ್ನು ಒಡೆಯಬೇಕು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಬಡಿದು ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.</verse>
				<verse number="6">ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರು; ಜಗದಲ್ಲಿರುವ ಸಮಸ್ತ ಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗಲು ಅವರು ಆಯ್ದುಕೊಂಡಿದ್ದಾರೆ.</verse>
				<verse number="7">“ನೀವು ಸಂಖ್ಯೆಯಲ್ಲಿ ಜನಾಂಗಗಳಿಗೆಲ್ಲಾ ಹೆಚ್ಚುಮಂದಿ ಎಂದು ಪ್ರೀತಿಸಿ, ಆಯ್ದುಕೊಳ್ಳಲಿಲ್ಲ; ನಿಜವಾಗಿಯೂ ನೀವು ಎಲ್ಲಾ ಜನಾಂಗಗಳಿಗಿಂತ ಅಲ್ಪಸಂಖ್ಯಾತರು.</verse>
				<verse number="8">ಆದರೂ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿ, ತಾವು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು, ಈಜಿಪ್ಟಿನ ರಾಜ ಫರೋಹನ ಕೈಕೆಳಗೆ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತಮ್ಮ ಭುಜಬಲ ಪ್ರಯೋಗಿಸಿ, ಆ ದೇಶದಿಂದ ಬರಮಾಡಿದ್ದಾರೆ.</verse>
				<verse number="9">ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರೇ ದೇವರೆಂದು ತಿಳಿದುಕೊಳ್ಳಬೇಕು. ಅವರೇ ನಂಬಿಕಸ್ತರಾದ ದೇವರು; ತಮ್ಮನ್ನು ಪ್ರೀತಿಸಿ ತಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ತಾವು ಮಾಡಿದ ವಾಗ್ದಾನವನ್ನು ನೆರವೇರಿಸಿ, ತಮ್ಮ ಅಚಲಪ್ರೀತಿಯನ್ನು ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ತೋರಿಸುವರು.</verse>
				<verse number="10">ತಮ್ಮನ್ನು ತಿರಸ್ಕರಿಸಿದವರಿಗೆ ಪ್ರತಿಯಾಗಿ ನಾಶವನ್ನು ಉಂಟುಮಾಡುವರು. ಇದನ್ನು ನೀವು ತಿಳಿದುಕೊಳ್ಳಬೇಕು. ಹಗೆಯವರ ವಿಷಯದಲ್ಲಿ ಅವರು ತಡಮಾಡದೆ ಆಗಲೇ ಮುಯ್ಯಿತೀರಿಸುವರು.</verse>
				<verse number="11">ಆದಕಾರಣ ನಾನು ಈ ದಿನ ನಿಮಗೆ ಬೋಧಿಸುವ ಧರ್ಮೋಪದೇಶವನ್ನೂ ಆಜ್ಞಾವಿಧಿಗಳನ್ನೂ ನೀವು ಅನುಸರಿಸಿ ನಡೆಯಬೇಕು.</verse>
				<verse number="12">“ಈ ವಿಧಿಗಳನ್ನು ನೀವು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣ ಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸುವರು, ನಿಮಗೆ ಕೃಪೆತೋರುವರು,</verse>
				<verse number="13">ನಿಮ್ಮನ್ನು ಅಚಲವಾಗಿ ಪ್ರೀತಿಸಿ, ಅಭಿವೃದ್ಧಿಗೊಳಿಸುವರು; ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿನಲ್ಲಿ ನಿಮ್ಮ ಸಂತಾನವನ್ನು, ವ್ಯವಸಾಯವನ್ನು, ದವಸಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಹಾಗು ದನಕುರಿಗಳ ಮಂದೆಯನ್ನು ವೃದ್ಧಿಗೊಳಿಸುವರು.</verse>
				<verse number="14">ನೀವು ಎಲ್ಲ ಜನಗಳಿಗಿಂತ ಹೆಚ್ಚಾಗುವಿರಿ, ದೇವರ ಅನುಗ್ರಹವನ್ನು ಹೊಂದುವಿರಿ. ನಿಮ್ಮಲ್ಲಿ ಸ್ತ್ರೀಪುರುಷರಲ್ಲಾಗಲಿ, ಹೆಣ್ಣುಗಂಡು ಪಶುಪ್ರಾಣಿಗಳಲ್ಲಾಗಲಿ, ಬಂಜೆತನ ಎಂಬುದು ಇರುವುದಿಲ್ಲ.</verse>
				<verse number="15">ನಿಮಗೆ ಯಾವ ವ್ಯಾಧಿಯೂ ತಗಲದಂತೆ ಸರ್ವೇಶ್ವರ ನೋಡಿಕೊಳ್ಳುವರು. ನೀವೇ ಅನುಭವದಿಂದ ಅರಿತಿರುವಂತೆ ಈಜಿಪ್ಟ್ ದೇಶದಲ್ಲಿ ಪ್ರಬಲ ಆಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸಲಿಲ್ಲ; ಅವುಗಳನ್ನು ನಿಮ್ಮ ದ್ವೇಷಿಗಳ ಮೇಲೆ ಮಾತ್ರ ಬರಮಾಡುವರು.</verse>
				<verse number="16">ನಿಮ್ಮ ದೇವರಾದ ಸರ್ವೇಶ್ವರಾ, ನಿಮ್ಮಿಂದ ಪರಾಜಯಪಡಿಸುವ ಜನರುಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವುವು.</verse>
				<verse number="17">‘ಆ ಜನರು ನಮಗಿಂತ ಹೆಚ್ಚುಮಂದಿ ಇದ್ದಾರೆ; ಅವರನ್ನು ಹೊರದೂಡಲು ನಮ್ಮಿಂದ ಹೇಗಾದೀತು? ಎಂದುಕೊಳ್ಳುತ್ತೀರೋ?</verse>
				<verse number="18">ಅವರಿಗೆ ಹೆದರಬೇಡಿ. ನಿಮ್ಮ ದೇವರಾದ ಸರ್ವೇಶ್ವರ ಫರೋಹನಿಗೂ ಈಜಿಪ್ಟರೆಲ್ಲರಿಗೂ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿ.</verse>
				<verse number="19">ಆಗ ನೀವೇ ಕಣ್ಣಾರೆ ನೋಡಿದಂತೆ ಸರ್ವೇಶ್ವರ ವಿಶೇಷ ಪರಿಶೋಧನೆ, ಪವಾಡ, ಮಹತ್ಕಾರ್ಯ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದರಲ್ಲವೆ? ನೀವು ಹೆದರಿಕೊಳ್ಳುವ ಆ ಎಲ್ಲ ಜನಾಂಗಗಳಿಗೂ ಅವರು ಹಾಗೆಯೇ ಮಾಡುವರು.</verse>
				<verse number="20">ಅದು ಮಾತ್ರವಲ್ಲದೆ, ನಿಮ್ಮ ದೇವರಾದ ಸರ್ವೇಶ್ವರ ಕಣಜದ ಹುಳುಗಳನ್ನು ಅವರ ನಡುವೆ ಕಳುಹಿಸುವರು; ಮರೆ ಆಗಿ ಉಳಿದುಕೊಂಡವರು ಆ ಹುಳಗಳಿಂದ ನಾಶವಾಗಿ ನಿಮಗೆ ಕಾಣದೆಹೋಗುವರು.</verse>
				<verse number="21">ನೀವು ಆ ಜನರಿಗೆ ಹೆದರಿಕೊಳ್ಳಬೇಡಿ.</verse>
				<verse number="22">ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮಧ್ಯೆ ಇದ್ದಾರೆ. ಅವರು ಭಯಭಕ್ತಿಗೆ ಪಾತ್ರರಾದ ಮಹಾದೇವರು. ನಿಮ್ಮ ದೇವರಾದ ಸರ್ವೇಶ್ವರ ಆ ಜನಾಂಗಗಳನ್ನು ನಿಮ್ಮ ಮುಂದೆಯೇ ಸ್ವಲ್ಪ ಸ್ವಲ್ಪವಾಗಿ ಹೊರಡಿಸುವರು. ನೀವು ಬಹು ಶೀಘ್ರವಾಗಿ ಅವರನ್ನು ನಿರ್ಮೂಲಮಾಡಕೂಡದು; ಮಾಡಿದರೆ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯನ್ನುಂಟುಮಾಡುವುವು.</verse>
				<verse number="23">ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮಿಂದ ಸೋಲಿಸಿ, ಬಹಳವಾಗಿ ಗಲಿಬಿಲಿ ಉಂಟುಮಾಡಿ ಕಡೆಗೆ ಅವರನ್ನು ಇಲ್ಲದಂತೆ ಮಾಡುವರು.</verse>
				<verse number="24">ಈ ಜನರ ಅರಸುಗಳು ನಿಮ್ಮ ಕೈಗೆಸಿಕ್ಕುವಂತೆ ಮಾಡುವರು. ನೀವು ಅವರ ಹೆಸರುಗಳೇ ಭೂಮಿಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲರು; ಎಲ್ಲರನ್ನು ನೀವು ನಾಶಮಾಡುವಿರಿ.</verse>
				<verse number="25">“ಆ ಜನರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಬಯಸಬಾರದು. ಅದನ್ನು ತೆಗೆದುಕೊಂಡರೆ ಅದೇ ನಿಮಗೆ ಉರುಲಾಗುವದು. ಅದು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾದುದು; ಅವರಿಂದ ಶಾಪಗ್ರಸ್ತವಾದುದು.</verse>
				<verse number="26">ನೀವು ಅಂಥ ವಸ್ತುವನ್ನು ಮನೆಯೊಳಕ್ಕೆ ತಂದು ಅದರಂತೆಯೇ ನಾಶಕ್ಕೆ ಗುರಿಯಾಗಬಾರದು. ಅದು ಶಾಪಗ್ರಸ್ತವಾದ್ದರಿಂದ ಅಸಹ್ಯಪಟ್ಟು ಅದನ್ನು ಮುಟ್ಟಲೂಕೂಡದು.</verse>
			</chapter>
			<chapter number="8">
				<verse number="1">“ನಾನು ಈಗ ನಿಮಗೆ ಬೋಧಿಸುವ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು. ಅನುಸರಿಸಿದರೆ ನೀವು ಬಾಳಿ ಅಭಿವೃದ್ಧಿಯಾಗುವಿರಿ. ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣರೂಪವಾಗಿ ಕೊಟ್ಟ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ.</verse>
				<verse number="2">“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈ ನಲವತ್ತು ವರ್ಷ ಮರುಭೂಮಿಯಲ್ಲಿ ನಡೆಸಿದ್ದನ್ನು ಹಾಗು ನೀವು ಅವರ ಆಜ್ಞೆಗಳನ್ನು ಕೈಕೊಳ್ಳುವವರೋ ಅಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನು ನೆನಪಿಗೆ ತಂದುಕೊಳ್ಳಿರಿ.</verse>
				<verse number="3">ಮಾನವರು ಆಹಾರ ಮಾತ್ರದಿಂದಲ್ಲ, ಸರ್ವೇಶ್ವರ ಆಡುವ ಪ್ರತಿಯೊಂದು ಮಾತಿನಿಂದಲೂ ಜೀವಿಸುತ್ತಾರೆಂಬುದು ನಿಮಗೆ ತಿಳಿಯುವಂತೆ ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿದರು. ಹಸಿವೆಯಿಂದ ಬಳಲಿಸಿದರು. ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದರು.</verse>
				<verse number="4">ಈ ನಲವತ್ತು ವರ್ಷ ನಿಮ್ಮ ಮೈಮೇಲಿದ್ದ ಉಡುಪು ಹರಿದುಹೋಗಲಿಲ್ಲ; ನಿಮ್ಮ ಕಾಲುಗಳು ಊದುಹೋಗಲಿಲ್ಲ.</verse>
				<verse number="5">ಒಬ್ಬ ತಂದೆ ತನ್ನ ಮಗನನ್ನು ಹೇಗೊ ಹಾಗೆಯೇ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಶಿಕ್ಷಿಸುತ್ತಾ ಬಂದರೆಂಬುದನ್ನು ನೀವು ಆಲೋಚಿಸಿ ನೋಡಬೇಕು.</verse>
				<verse number="6">ಅವರ ಆಜ್ಞೆಗಳನ್ನು ಅನುಸರಿಸುತ್ತಾ ಅವರು ಹೇಳಿದ ಮಾರ್ಗದಲ್ಲೇ ನಡೆದು ಅವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು.</verse>
				<verse number="7">“ನಿಮ್ಮ ದೇವರಾದ ಸರ್ವೇಶ್ವರ ಉತ್ತಮವಾದ ನಾಡಿಗೆ ನಿಮ್ಮನ್ನು ಸೇರಿಸುತ್ತಾರೆ. ಆ ನಾಡಿನ ಹಳ್ಳಗಳಲ್ಲಿ ನೀರು ಯಾವಾಗಲೂ ಹರಿಯುತ್ತಿರುತ್ತದೆ; ತಗ್ಗುಗಳಲ್ಲಾಗಲಿ, ಗುಡ್ಡಗಳಲ್ಲಿ ಆಗಲಿ, ಎಲ್ಲಾ ಕಡೆಯು ಬಾವಿಗಳಿಂದಲೂ ಬುಗ್ಗೆಗಳಿಂದಲೂ ನೀರು ಉಕ್ಕುತ್ತಿರುತ್ತದೆ.</verse>
				<verse number="8">ಆ ನಾಡಿನಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬೆ ಇವುಗಳು ಬೆಳೆಯುತ್ತವೆ; ಎಣ್ಣೆಮರಗಳು ಹಾಗು ಜೇನುತುಪ್ಪ ಸಿಕ್ಕುತ್ತವೆ.</verse>
				<verse number="9">ಅಲ್ಲಿ ನೀವು ದುರ್ಭಿಕ್ಷವನ್ನೇ ಕಾಣದೆ, ಸಮೃದ್ಧಿ ಆಗಿ ಉಂಡು, ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ನಾಡಿನಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ. ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳಿವೆ.</verse>
				<verse number="10">ನೀವು ಹೊಟ್ಟೆತುಂಬ ಉಂಡು ಸುಖದಿಂದಿರುವಾಗ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಇಂಥ ಉತ್ತಮ ನಾಡನ್ನು ಕೊಟ್ಟದ್ದಕ್ಕಾಗಿ ಅವರನ್ನು ಸ್ತುತಿಸಬೇಕು.</verse>
				<verse number="11">“ಎಚ್ಚರಿಕೆ, ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಸರ್ವೇಶ್ವರನ ಆಜ್ಞಾವಿಧಿನಿರ್ಣಯಗಳನ್ನು ಕೈಕೊಳ್ಳದವರೂ ಅವರನ್ನು ಮರೆತುಬಿಡುವವರೂ ಆಗಬೇಡಿ.</verse>
				<verse number="12">ನೀವು ಹೊಟ್ಟೆ ತುಂಬ ಉಂಡು, ಸುಖವಾಗಿದ್ದು, ಒಳ್ಳೊಳ್ಳೆಯ ಮನೆಗಳನ್ನು ಕಟ್ಟಿಸಿಕೊಂಡು, ಅವುಗಳಲ್ಲಿ ವಾಸವಾಗಿರುವ ಕಾಲದಲ್ಲಿ,</verse>
				<verse number="13">ನಿಮ್ಮ ದನಕರುಗಳು, ಆಡುಕುರಿಗಳು, ಬೆಳ್ಳಿಬಂಗಾರ ಹಾಗು ಆಸ್ತಿಯೆಲ್ಲವೂ ಹೆಚ್ಚುತ್ತಿರುವಾಗ,</verse>
				<verse number="14">ನೀವು ಗರ್ವಗೊಂಡು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟೀರಿ!</verse>
				<verse number="15">ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ ನಿಮಗೆ ಒಳಿತನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ಈಜಪ್ಟ್ ದೇಶದಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದರು. ವಿಷಸರ್ಪಗಳೂ ಚೇಳುಗಳೂ ಇದ್ದ ಆ ಘೋರವಾದ ಮಹಾಮರುಭೂಮಿಯನ್ನೂ ನೀರು ಬತ್ತಿಹೋಗಿದ್ದ ಭೂಮಿಗಳನ್ನೂ ದಾಟಿಸಿದರು; ಗಟ್ಟಿಯಾದ ಬಂಡೆಯೊಳಗಿಂದ ನೀರನ್ನು ಹೊರಡಿಸಿಕೊಟ್ಟರು. ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದರು. ಅಂಥವರನ್ನು ಮರೆತು ಮನಸ್ಸಿನಲ್ಲೇ</verse>
				<verse number="16"></verse>
				<verse number="17">‘ಈ ಭಾಗ್ಯ ನಮ್ಮ ಸಾಮರ್ಥ್ಯ ಸಾಹಸಗಳಿಂದಲೇ ನಮಗೆ ಲಭಿಸಿತು’ ಎಂದುಕೊಂಡೀರಿ ಎಚ್ಚರಿಕೆ!</verse>
				<verse number="18">ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮಗೆ ಮನಮುಟ್ಟುವ ರೀತಿಯಲ್ಲಿ ನೆರವೇರಿಸಿದ್ದಾರೆ. ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವ ಸಾಮರ್ಥ್ಯವನ್ನು ಕೊಟ್ಟಿದ್ದಾರೆ ಎಂಬುದನ್ನು ಜ್ಞಾಪಕಮಾಡಿಕೊಳ್ಳಿ.</verse>
				<verse number="19">ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಮರೆತು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ ನೀವು ತಪ್ಪದೆ ನಾಶವಾಗಿಹೋಗುವಿರೆಂದು ನಿಮ್ಮನ್ನು ಈಗ ಖಂಡಿತವಾಗಿ ಎಚ್ಚರಿಸುತ್ತೇನೆ.</verse>
				<verse number="20">ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳದೆಹೋದರೆ, ಅವರಿಂದ ನಿಮ್ಮ ಮುಂದೆಯೇ ನಾಶವಾಗಿಹೋಗುವ ಅನ್ಯಜನಾಂಗಗಳಂತೆ ನೀವೂ ನಾಶವಾಗಿಹೋಗುವಿರಿ.</verse>
			</chapter>
			<chapter number="9">
				<verse number="1">“ಇಸ್ರಯೇಲರೇ ಕೇಳಿ: ನಿಮಗಿಂತ ಮಹಾಬಲಿಷ್ಠ ಜನಾಂಗಗಳನ್ನು ಹಾಗು ಗಗನ ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲು, ನೀವು ಈ ಜೋರ್ಡನ್ ನದಿಯನ್ನು ಇಂದು ದಾಟಲಿದ್ದೀರಿ.</verse>
				<verse number="2">ಆ ನಾಡಿನವರು ಅನಾಕ್ಯರೆಂಬ ಬಲಿಷ್ಠರಾದ ಎತ್ತರದ ಜನರು. ಅವರ ವಿಷಯ ನಿಮಗೆ ತಿಳಿದೇ ಇದೆ; ‘ಅನಾಕ್ಯರ ಮುಂದೆ ನಿಲ್ಲಬಲ್ಲವರು ಯಾರಿದ್ದಾರೆ’ ಎಂಬ ಮಾತನ್ನು ಕೇಳಿದ್ದೀರಷ್ಟೆ.</verse>
				<verse number="3">ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ತಾವೇ, ವಿರೋಧಿಗಳನ್ನು ದಹಿಸುವ ಬೆಂಕಿಯೋಪಾದಿಯಲ್ಲಿ ನಿಮ್ಮ ಮುಂದೆ ಹೋಗುತ್ತಾರೆಂದು ಈಗ ತಿಳಿದುಕೊಳ್ಳಿ. ಅವರೇ ಆ ವಿರೋಧಿಗಳನ್ನು ನಾಶಮಾಡುವರು; ನಿಮ್ಮ ಮುಂದೆ ಆ ವಿರೋಧಿಗಳು ಸೋತುಹೋಗುವಂತೆ ಮಾಡುವರು. ಸರ್ವೇಶ್ವರ ನಿಮಗೆ ಹೇಳಿದಂತೆ ನೀವು ಅವರನ್ನು ಹೊರಡಿಸಿ ಬೇಗನೆ ನಾಶಮಾಡುವಿರಿ.</verse>
				<verse number="4">“ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿದನಂತರ ನೀವು ಮನಸ್ಸಿನಲ್ಲೇ, ‘ಸರ್ವೇಶ್ವರ ನಮ್ಮನ್ನು ಈ ನಾಡಿಗೆ ಕರೆತಂದು ಅದನ್ನು ನಮಗೆ ಸ್ವಾಧೀನಪಡಿಸಿದ್ದು ನಮ್ಮ ಪುಣ್ಯಫಲವೇ’ ಎಂದುಕೊಳ್ಳಬಾರದು. ಆ ಜನಾಂಗಗಳ ದುರ್ನಡತೆಯ ಕಾರಣದಿಂದಲೇ ಸರ್ವೇಶ್ವರ ನಿಮ್ಮ ಬಳಿಯಿಂದ ಅವರನ್ನು ಹೊರದಬ್ಬುತ್ತಾರೆ.</verse>
				<verse number="5">ನೀವು ಅವರ ನಾಡಿಗೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನಿಮ್ಮ ಪುಣ್ಯವೇ ಆಗಲಿ, ನಿಮ್ಮ ಸುಸ್ವಭಾವವೇ ಆಗಲಿ, ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ಕಾರಣ ಹಾಗು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಕಾರಣ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿಬಿಡುತ್ತಾರೆ.</verse>
				<verse number="6">ನಿಮ್ಮ ದೇವರಾದ ಸರ್ವೇಶ್ವರ ಆ ಉತ್ತಮ ನಾಡನ್ನು ನಿಮಗೆ ಸ್ವದೇಶವಾಗಿ ಕೊಡುವುದು ನಿಮ್ಮ ಪುಣ್ಯಫಲವಲ್ಲವೆಂದು ಚೆನ್ನಾಗಿ ತಿಳಿದುಕೊಳ್ಳಿ. ನೀವು ಅವರ ಆಜ್ಞೆಗೆ ಮಣಿಯದ ಜನರೇ ಆಗಿದ್ದೀರಿ.</verse>
				<verse number="7">“ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಸರ್ವೇಶ್ವರನಿಗೆ ಕೋಪ ಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿ. ಅದನ್ನು ಮರೆಯಬೇಡಿ. ನೀವು ಈಜಿಪ್ಟ್ ದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಸರ್ವೇಶ್ವರನ ಆಜ್ಞೆಗಳನ್ನು ಧಿಕ್ಕರಿಸುತ್ತಾ ಬಂದಿದ್ದೀರಿ.</verse>
				<verse number="8">ಉದಾಹರಣೆಗೆ, ಹೋರೇಬಿನಲ್ಲಿ ನೀವು ಸರ್ವೇಶ್ವರನಿಗೆ ಕೋಪವನ್ನು ಹುಟ್ಟಿಸಿದಿರಿ. ಆಗ ಅವರು ಬಲು ಸಿಟ್ಟುಗೊಂಡು ನಿಮ್ಮನ್ನು ಧ್ವಂಸಮಾಡಬೇಕೆಂದಿದ್ದರು.</verse>
				<verse number="9">ಸರ್ವೇಶ್ವರ ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಬರೆದ ಆ ಕಲ್ಲಿನ ಹಲಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದಾಗ ಅನ್ನಪಾನಗಳನ್ನು ಬಿಟ್ಟು ಹಗಲಿರುಳು ನಲವತ್ತು ದಿನ ಆ ಬೆಟ್ಟದಲ್ಲಿದ್ದೆ.</verse>
				<verse number="10">ಆಗ ಸರ್ವೇಶ್ವರ ತಮ್ಮ ಕೈಯಿಂದಲೇ ಬರೆದ ಆ ಎರಡು ಕಲ್ಲಿನ ಹಲಗೆಗಳನ್ನು ನನ್ನ ವಶಕ್ಕೆ ಕೊಟ್ಟರು. ನೀವು ಸಭೆಕೂಡಿದ ದಿನದಲ್ಲಿ ಸರ್ವೇಶ್ವರ ಆ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನಿಮ್ಮ ಸಂಗಡ ಹೇಳಿದ ಮಾತುಗಳು ಆ ಹಲಗೆಗಳಲ್ಲಿದ್ದವು.</verse>
				<verse number="11">ಆ ನಲವತ್ತು ದಿನಗಳು ಕಳೆದ ಮೇಲೆ ಸರ್ವೇಶ್ವರ ತಮ್ಮ ನಿಬಂಧನೆಯಿದ್ದ ಆ ಎರಡು ಕಲ್ಲಿನ ಹಲಗೆಗಳನ್ನು ನನಗೆ ಕೊಟ್ಟು, ‘ನೀನು ಬೇಗ ಇಲ್ಲಿಂದ ಇಳಿದುಹೋಗು;</verse>
				<verse number="12">ನೀನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು; ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ, ತಮಗೆ ಲೋಹವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ’ ಎಂದು ಹೇಳಿದರು.</verse>
				<verse number="13">“ಅದಲ್ಲದೆ ಅವರು ನನಗೆ, ‘ಈ ಜನರ ಸ್ವಭಾವವನ್ನು ನಾನು ನೋಡುತ್ತಾ ಬಂದಿದ್ದೇನೆ;</verse>
				<verse number="14">ಇವರು ನನ್ನ ಆಜ್ಞೆಗೆ ಬಗ್ಗದವರು. ಬಿಡು, ನಾನು ಅವರನ್ನು ನಾಶಮಾಡಿ ಅವರ ಹೆಸರನ್ನು ಭೂಮಿಯ ಮೇಲೆ ಉಳಿಯದಂತೆ ಮಾಡುವೆನು. ತರುವಾಯ ಅವರಿಗಿಂತಲೂ ಮಹಾಬಲಿಷ್ಠ ಜನಾಂಗವೊಂದು ನಿನ್ನಿಂದುಂಟಾಗುವಂತೆ ಮಾಡುವೆನು,’ ಎಂದು ಹೇಳಿದರು.</verse>
				<verse number="15">ಆಗ ನಾನು ಆ ಎರಡು ಆಜ್ಞಾಶಾಸನಗಳನ್ನು ನನ್ನ ಎರಡು ಕೈಗಳಲ್ಲಿ ಹಿಡಿದುಕೊಂಡು ಬೆಂಕಿಯಿಂದ ಉರಿಯುತ್ತಿದ್ದ ಆ ಬೆಟ್ಟದಿಂದ ಇಳಿದುಬಂದು ನೋಡಿದೆ.</verse>
				<verse number="16">ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ದ್ರೋಹಿಗಳಾಗಿ ಲೋಹದ ಹೋರಿಕರುವನ್ನು ಮಾಡಿಸಿಕೊಂಡು ಸರ್ವೇಶ್ವರ ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗನೆ ಬಿಟ್ಟುಹೋದದ್ದು ನನಗೆ ಕಂಡುಬಂದಿತು.</verse>
				<verse number="17">ಅದನ್ನು ನೋಡಿ ನಾನು ಕೈಯಲ್ಲಿದ್ದ ಆ ಎರಡು ಶಿಲಾಶಾಸನಗಳನ್ನು ನಿಮ್ಮ ಎದುರಿನಲ್ಲಿಯೇ ನೆಲಕ್ಕೆ ಹಾಕಿ ಒಡೆದುಬಿಟ್ಟೆ.</verse>
				<verse number="18">“ನೀವು ಹೀಗೆ ಅಪರಾಧಮಾಡಿ, ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ಅವರನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನಪಾನಗಳನ್ನು ಬಿಟ್ಟು ನಲವತ್ತು ದಿನಗಳು ಹಗಲಿರುಳು ಸರ್ವೇಶ್ವರನ ಸನ್ನಿಧಿಯಲ್ಲೇ ಬಿದ್ದಿದ್ದೆ.</verse>
				<verse number="19">ಸರ್ವೇಶ್ವರ ನಿಮ್ಮ ಮೇಲೆ ಬಹು ಕೋಪಗೊಂಡು ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದ್ದರಿಂದ ನಾನು ಹೆದರಿದೆ. ಆದರೆ ಆ ಕಾಲದಲ್ಲೂ ಅವರು ನನ್ನ ಮನವಿಯನ್ನು ಕೇಳಿದರು.</verse>
				<verse number="20">ಅದಲ್ಲದೆ, ಸರ್ವೇಶ್ವರ ಆರೋನನ ಮೇಲೆ ಬಹಳ ಸಿಟ್ಟುಗೊಂಡು, ಅವನನ್ನೂ ನಾಶಮಾಡಬೇಕೆಂದಿದ್ದರು. ಆದುದರಿಂದ ನಾನು ಅವನ ಪರವಾಗಿಯೂ ಆ ಕಾಲದಲ್ಲಿ ಪ್ರಾರ್ಥಿಸಿದೆ.</verse>
				<verse number="21">ಮತ್ತು ನಿಮ್ಮ ಪಾಪಕ್ಕೆ ಕಾರಣವಾದ ಆ ಹೋರಿಕರುವನ್ನು ನಾನು ತೆಗೆದುಕೊಂಡು, ಬೆಂಕಿಯಿಂದ ಸುಟ್ಟು, ಒಡೆದು, ಅರೆದು, ಧೂಳುಮಾಡಿ ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ಬಿಸಾಡಿಬಿಟ್ಟೆ.</verse>
				<verse number="22">“ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಳಲ್ಲೂ ನೀವು ಸರ್ವೇಶ್ವರನಿಗೆ ಕೋಪವನ್ನು ಹುಟ್ಟಿಸಿದಿರಿ.</verse>
				<verse number="23">ಅದೂ ಅಲ್ಲದೆ, ಕಾದೇಶ್ ಬರ್ನೇಯದಲ್ಲಿ ಸರ್ವೇಶ್ವರ ನಿಮಗೆ, ‘ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ನಾಡನ್ನು ಸ್ವಾಧೀನಮಾಡಿಕೊಳ್ಳಿ,’ ಎಂದು ಅಪ್ಪಣೆ ಕೊಟ್ಟಾಗಲೂ ನೀವು ನಿಮ್ಮ ದೇವರಾದ ಸರ್ವೇಶ್ವರನ ಆ ಆಜ್ಞೆಯನ್ನು ಧಿಕ್ಕರಿಸಿ ಅವರನ್ನು ನಂಬದೆ ಅವರ ಮಾತನ್ನು ಅಲಕ್ಷ್ಯಮಾಡಿದಿರಿ.</verse>
				<verse number="24">ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಸರ್ವೇಶ್ವರನ ಆಜ್ಞೆಯನ್ನು ಉಲ್ಲಂಘಿಸುತ್ತಾ ಬಂದಿದ್ದೀರಿ.</verse>
				<verse number="25">“ಸರ್ವೇಶ್ವರ ನಿಮ್ಮನ್ನು ನಾಶಮಾಡಬೇಕೆಂದಿದ್ದುದರಿಂದ ನಾನು ಆ ನಲವತ್ತು ದಿನವೂ ಹಗಲಿರುಳು ಅವರ ಸನ್ನಿಧಿಯಲ್ಲೇ ಬಿದ್ದಿದ್ದೆ.</verse>
				<verse number="26">ನಾನು ಅವರನ್ನು ಬೇಡಿಕೊಳ್ಳುತ್ತಾ, ‘ಸರ್ವೇಶ್ವರಾ, ದೇವರೇ, ನೀವು ನಿಮ್ಮ ಮಹಿಮೆಯಿಂದ ರಕ್ಷಿಸಿ, ನಿಮ್ಮ ಭುಜಬಲ ಪ್ರಯೋಗಿಸಿ ಈಜಿಪ್ಟಿನಿಂದ ಬಿಡುಗಡೆಮಾಡಿದ ನಿಮ್ಮ ಸ್ವಕೀಯ ಜನರನ್ನು ನಾಶಮಾಡಬೇಡಿ.</verse>
				<verse number="27">ಇವರ ಮೊಂಡುತನ, ದುಷ್ಟತನ, ಪಾಪ ಇವುಗಳನ್ನು ಮನಸ್ಸಿಗೆ ತೆಗೆದುಕೊಳ್ಳದೆ ನಿಮ್ಮ ದಾಸರಾದ ಅಬ್ರಹಾಮ್, ಇಸಾಕ್, ಯಕೋಬರನ್ನು ನೆನಪಿಗೆ ತಂದುಕೊಳ್ಳಿ.</verse>
				<verse number="28">ನೀವು ಯಾವ ದೇಶದಿಂದ ನಮ್ಮನ್ನು ಬರಮಾಡಿದಿರೋ ಆ ದೇಶದವರು, ‘ಸರ್ವೇಶ್ವರ ಇಸ್ರಯೇಲರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಲಾರದೆ ಹಗೆಮಾಡಿ, ಮರುಭೂಮಿಯಲ್ಲಿ ಕೊಲ್ಲುವುದಕ್ಕೇ ಕರೆದುಕೊಂಡು ಹೋದರು’ ಎಂದು ಹೇಳುವುದಕ್ಕೆ ಆಸ್ಪದವಾದೀತು.</verse>
				<verse number="29">ಮಹಾಶಕ್ತಿಯಿಂದಲೂ ಭುಜಬಲದಿಂದಲೂ ನೀವು ಬಿಡಿಸಿದ ನಿಮ್ಮ ಸ್ವಕೀಯ ಜನ ಹಾಗು ಸೊತ್ತು ಇವರಲ್ಲವೇ? ಎಂದು ಬಿನ್ನೈಸಿದೆ.</verse>
			</chapter>
			<chapter number="10">
				<verse number="1">“ಆ ಕಾಲದಲ್ಲಿ ಸರ್ವೇಶ್ವರ ನನಗೆ, ‘ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಬೇರೆ ಎರಡು ಹಲಗೆಗಳನ್ನು ಸಿದ್ಧಪಡಿಸಿಕೊಂಡು ಬೆಟ್ಟವನ್ನು ಹತ್ತಿ ನನ್ನ ಬಳಿಗೆ ಬಾ ಮತ್ತು ಒಂದು ಮರದ ಮಂಜೂಷವನ್ನು ಮಾಡಿಸಿಕೊಳ್ಳಬೇಕು.</verse>
				<verse number="2">ನೀನು ಒಡೆದುಬಿಟ್ಟ ಆ ಮೊದಲಿನ ಹಲಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿಡಬೇಕು’ ಎಂದು ಆಜ್ಞಾಪಿಸಿದರು.</verse>
				<verse number="3">ಆದಕಾರಣ, ನಾನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿ, ಮೊದಲಿನ ಕಲ್ಲಿನ ಹಲಗೆಗಳಂತೆ ಬೇರೆ ಎರಡು ಹಲಗೆಗಳನ್ನು ಸಿದ್ಧಪಡಿಸಿ, ಆ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು, ಬೆಟ್ಟವನ್ನು ಹತ್ತಿದೆ.</verse>
				<verse number="4">ಸರ್ವೇಶ್ವರ ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ, ನೀವು ಸಭೆಕೂಡಿದ ದಿನದಲ್ಲಿ, ನಿಮಗೆ ಹೇಳಿದ ಮಾತುಗಳನ್ನು ಅಂದರೆ, ಆ ಹತ್ತು ಆಜ್ಞೆಗಳನ್ನು ಅವರು ಮೊದಲಿನಂತೆಯೇ ಆ ಹಲಗೆಗಳ ಮೇಲೆ ಬರೆದರು.</verse>
				<verse number="5">ಸರ್ವೇಶ್ವರ ಹಲಗೆಗಳನ್ನು ನನ್ನ ವಶಕ್ಕೆ ಕೊಟ್ಟನಂತರ ನಾನು ಬೆಟ್ಟದಿಂದ ಇಳಿದುಬಂದೆ; ನನ್ನಿಂದ ಸಿದ್ಧ ಆಗಿದ್ದ ಮಂಜೂಷದಲ್ಲಿ ಅವರ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆ; ಅವು ಇಂದಿನವರೆಗೂ ಅದರಲ್ಲೇ ಇವೆ.</verse>
				<verse number="6">(ಇಸ್ರಯೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣಮಾಡಿ ಮೋಸೇರಕ್ಕೆ ಬಂದರು. ಅಲ್ಲಿ ಆರೋನನು ಸಾಯಲಾಗಿ ಅವನನ್ನು ಸಮಾಧಿಮಾಡಿದರು. ಅವನ ಮಗ ಎಲ್ಲಾಜಾರನು ಅವನಿಗೆ ಬದಲಾಗಿ ಮಹಾಯಾಜಕನಾದನು.</verse>
				<verse number="7">ಅಲ್ಲಿಂದ ಅವರು ಗುದ್ಗೋದಕ್ಕೂ ಗುದ್ಗೋದದಿಂದ ನೀರಿನ ಹಳ್ಳಗಳುಳ್ಳ ಯೊಟ್ಬಾತಕ್ಕೂ ಪ್ರಯಾಣಮಾಡಿದರು.)</verse>
				<verse number="8">“ಆ ಕಾಲದಲ್ಲಿ ಸರ್ವೇಶ್ವರ ಲೇವಿಕುಲದವರನ್ನು ಪ್ರತ್ಯೇಕಿಸಿ ತಮ್ಮ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕು, ತಮ್ಮ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕು ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕು ಅವರನ್ನು ನೇಮಿಸಿದರು. ಅವರು ಇಂದಿನವರೆಗೂ ಆ ಕೆಲಸವನ್ನು ನಡೆಸುತ್ತಾರೆ.</verse>
				<verse number="9">ಆದುದರಿಂದ ಮಿಕ್ಕ ಇಸ್ರಯೇಲರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ವಾಸ್ತ್ಯ ದೊರಕಲಿಲ್ಲ. ನಿಮ್ಮ ದೇವರಾದ ಸರ್ವೇಶ್ವರ ಅವರಿಗೆ ಹೇಳಿದಂತೆ ಸರ್ವೇಶ್ವರಸ್ವಾಮಿಯೇ ಅವರ ಸೊತ್ತು.</verse>
				<verse number="10">“ನಾನು ಮುಂಚಿನಂತೆ ಹಗಲಿರುಳು ನಲವತ್ತು ದಿನವೂ ಬೆಟ್ಟದ ಮೇಲೆ ಇದ್ದೆ. ಸರ್ವೇಶ್ವರ ಆ ಕಾಲದಲ್ಲೂ ನನ್ನ ಪ್ರಾರ್ಥನೆಯನ್ನು ಕೇಳಿ, ನಿಮ್ಮನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟರು.</verse>
				<verse number="11">ತರುವಾಯ ಸರ್ವೇಶ್ವರ ನನಗೆ, ‘ನೀನು ಈ ಜನರ ಮುಂದುಗಡೆ ಹೊರಡು; ನಾನು ಇವರ ಪಿತೃಗಳಿಗೆ ಪ್ರಮಾಣ ಮಾಡಿಕೊಟ್ಟ ನಾಡನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ,’ ಎಂದು ಆಜ್ಞಾಪಿಸಿದರು.</verse>
				<verse number="12">“ಆದುದರಿಂದ ಇಸ್ರಯೇಲರೇ, ನೀವು ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕು; ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆಯಬೇಕು; ಅವರನ್ನು ಪ್ರೀತಿಸುತ್ತಾ ಸಂಪೂರ್ಣವಾದ ಹೃದಯದಿಂದಲೂ ಮನಸ್ಸಿನಿಂದಲೂ ಸೇವೆಮಾಡಬೇಕು;</verse>
				<verse number="13">ನಾನು ನಿಮ್ಮ ಒಳಿತಿಗಾಗಿ ಈಗ ಬೋಧಿಸುವ ಅವರ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಬರಬೇಕು. ಇಷ್ಟನ್ನೇ ಹೊರತು, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮಿಂದ ಬೇರೇನನ್ನು ಕೇಳಿಕೊಳ್ಳುವುದಿಲ್ಲ.</verse>
				<verse number="14">ಇಗೋ ಕೇಳಿ: ಉನ್ನತೋನ್ನತವಾದ ಆಕಾಶಮಂಡಲವು, ಭೂಮಿಯು ಹಾಗು ಅದರಲ್ಲಿರುವ ಎಲ್ಲವು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯವೇ.</verse>
				<verse number="15">ಆದರೂ ಅವರು ನಿಮ್ಮ ಪಿತೃಗಳಲ್ಲಿ ಇಷ್ಟವುಳ್ಳವರಾಗಿ ಅವರನ್ನು ಪ್ರೀತಿಸಿದರು. ಈಗ ನಿಮ್ಮ ಅನುಭವಕ್ಕೆ ಬಂದಿರುವಂತೆ, ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲ ಜನಾಂಗಗಳಿಂದ ಆರಿಸಿಕೊಂಡರು.</verse>
				<verse number="16">ಆದುದರಿಂದ ಅವರ ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿ.</verse>
				<verse number="17">ನಿಮ್ಮ ದೇವರಾದ ಸರ್ವೇಶ್ವರ ದೇವಾದಿದೇವರು, ಸರ್ವೇಶ್ವರಾಧಿ ಸರ್ವೇಶ್ವರ. ಅವರು ಪರಮ ದೇವರೂ ಪರಾಕ್ರಮಿಯೂ ಭಯಂಕರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವವರಲ್ಲ, ಲಂಚ ತೆಗೆದುಕೊಳ್ಳುವವರಲ್ಲ.</verse>
				<verse number="18">ಅನಾಥರಿಗೆ ಮತ್ತು ವಿಧವೆಯರಿಗೆ ನ್ಯಾಯ ದೊರಕಿಸುತ್ತಾರೆ; ಪರದೇಷಿಗಳಾದವರಿಗೆ ಪ್ರೀತಿಯಿಂದ ಅನ್ನ ವಸ್ತ್ರಗಳನ್ನು ನೀಡುತ್ತಾರೆ.</verse>
				<verse number="19">ಈಜಿಪ್ಟ್ ದೇಶದಲ್ಲಿ ನೀವೇ ಪರದೇಶಿಗಳಾಗಿ ಇದ್ದುದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿ.</verse>
				<verse number="20">ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೇ ಸೇವೆಸಲ್ಲಿಸಿ. ಅವರನ್ನು ಹೊಂದಿಕೊಂಡು ಅವರ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.</verse>
				<verse number="21">ಅವರೊಬ್ಬರೇ ನಿಮ್ಮ ಸ್ತುತಿಸ್ತೋತ್ರಕ್ಕೆ ಪಾತ್ರರು; ಅವರು ನಿಮ್ಮ ದೇವರು; ನೀವು ನೋಡಿದ ಆ ಮಹಾಭಯಂಕರವಾದ ಮಹತ್ಕಾರ್ಯಗಳನ್ನು ನಿಮ್ಮ ಪರವಾಗಿ ನಡೆಸಿದವರು ಅವರೇ.</verse>
				<verse number="22">ನಿಮ್ಮ ಪಿತೃಗಳು, ಎಪ್ಪತ್ತುಮಂದಿ ಮಾತ್ರ. ಈಜಿಪ್ಟ್ ದೇಶಕ್ಕೆ ಹೋದರು; ಈಗಲಾದರೋ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗುವಂತೆ ಮಾಡಿದ್ದಾರೆ.</verse>
			</chapter>
			<chapter number="11">
				<verse number="1">“ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಪ್ರೀತಿಯಿಟ್ಟು, ಅವರ ನಿಯಮಗಳನ್ನು ಕೈಕೊಂಡು ಅವರ ಆಜ್ಞಾವಿಧಿನಿರ್ಣಯಗಳನ್ನು ಯಾವಾಗಲೂ ಅನುಸರಿಸಬೇಕು.</verse>
				<verse number="2">“ನಿಮ್ಮ ದೇವರಾದ ಸರ್ವೇಶ್ವರ ಪ್ರಯೋಗಿಸಿದ ಶಿಕ್ಷಣಕ್ರಮವನ್ನೂ ಮಹಿಮೆಯನ್ನೂ ಭುಜಬಲವನ್ನೂ ಶಿಕ್ಷಾಹಸ್ತವನ್ನೂ</verse>
				<verse number="3">ಅಂದರೆ, ಅವರು ಈಜಿಪ್ಟ್ ದೇಶದಲ್ಲಿ ಫರೋಹನನ್ನೂ ಅವನ ದೇಶವನ್ನೂ ಶಿಕ್ಷಿಸುವುದಕ್ಕಾಗಿ ನಡೆಸಿದ ಸೂಚಕ ಮತ್ತು ಮಹತ್ಕಾರ್ಯಗಳನ್ನೂ;</verse>
				<verse number="4">ಈಜಿಪ್ಟಿನವರು ರಥಾಶ್ವಬಲಗಳಿಂದ ಕೂಡಿದಂಥ ದಂಡಿನ ಸಮೇತ ನಿಮ್ಮನ್ನು ಹಿಂದಟ್ಟಿ ಬಂದಾಗ ಕೆಂಪುಸಮುದ್ರದ ನೀರನ್ನು ಅವರ ಮೇಲೆ ಬರಮಾಡಿ ಸಂಪೂರ್ಣವಾಗಿ ನಾಶಮಾಡಿದ್ದನ್ನೂ;</verse>
				<verse number="5">ನೀವು ಈ ಸ್ಥಳಕ್ಕೆ ಸೇರುವ ತನಕ ನಿಮಗೆ ಮರುಭೂಮಿಯಲ್ಲಿ ಮಾಡಿದ ಉಪಕಾರಗಳನ್ನೂ;</verse>
				<verse number="6">ರೂಬೇನನ ಮೊಮ್ಮಕ್ಕಳೂ ಎಲೀಯಾಬನ ಮಕ್ಕಳೂ ಆದ ದಾತಾನ್ ಅಬೀರಾಮರು ದಂಗೆಯೆದ್ದಾಗ ಭೂಮಿ ಬಾಯ್ದೆರೆದು ಅವರನ್ನೂ ಅವರ ಮನೆಯವರನ್ನೂ ಡೇರೆಗಳನ್ನೂ ಅವರಿಗೆ ಸೇರಿದ ಎಲ್ಲ ಪಶುಪ್ರಾಣಿಗಳನ್ನೂ ಇಸ್ರಯೇಲರ ನಡುವೆ ನುಂಗಿಬಿಟ್ಟದ್ದನ್ನೂ ಈಗ ಜ್ಞಾಪಕಮಾಡಿಕೊಳ್ಳಿ. ಈ ಕಾರ್ಯಗಳನ್ನು ನೋಡದೆ ಹಾಗು ತಿಳಿಯದೆ ಇರುವ ನಿಮ್ಮ ಮಕ್ಕಳಿಗೆ ನಾನು ಈ ಮಾತನ್ನು ಹೇಳುತ್ತಿಲ್ಲ;</verse>
				<verse number="7">ಸರ್ವೇಶ್ವರ ನಡೆಸಿದ ಆ ವಿಶೇಷಕಾರ್ಯಗಳನ್ನು ಪ್ರತ್ಯಕ್ಷವಾಗಿ ನೋಡಿದವರಾದ ನಿಮಗೇ ಹೇಳುತ್ತಾ ಇದ್ದೇನೆ.</verse>
				<verse number="8">“ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲ ನೀವು ಅನುಸರಿಸಬೇಕು. ಆಗ ನೀವು ಬಲವುಳ್ಳವರಾಗಿ ಈ ನದಿ ದಾಟಿ ಆಚೆಯಿರುವ ನಾಡನ್ನು ಸೇರಿ ಸ್ವಾಧೀನಮಾಡಿಕೊಳ್ಳುವಿರಿ;</verse>
				<verse number="9">ಸರ್ವೇಶ್ವರ ನಿಮ್ಮ ಪಿತೃಗಳಿಗೂ ಅವರ ಸಂತತಿಗೂ ಕೊಡುತ್ತೇನೆಂದು ಪ್ರಮಾಣಮಾಡಿದ ಆ ನಾಡಿನಲ್ಲಿ ನೀವು ಬಹುಕಾಲ ಬಾಳುವಿರಿ; ಅದು ಹಾಲೂ ಜೇನೂ ಹರಿಯುವ ನಾಡು.</verse>
				<verse number="10">ನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡು ನೀವು ಬಿಟ್ಟುಬಂದ ಈಜಿಪ್ಟ್ ದೇಶದ ಹಾಗಲ್ಲ. ಈಜಿಪ್ಟಿನಲ್ಲಿ ನೀವು ಹೊಲಗದ್ದೆಗಳಲ್ಲಿ ಬೀಜ ಬಿತ್ತಿದ ಮೇಲೆ ಕಾಯಿಪಲ್ಯಗಳ ತೋಟವನ್ನು ಸಾಗುವಳಿಮಾಡುವ ರೀತಿಯಲ್ಲಿ ಏತವನ್ನು ತುಳಿದು ನೀರುಕಟ್ಟುತ್ತಿದ್ದಿರಿ.</verse>
				<verse number="11">ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡೋ ಹಳ್ಳದಿಣ್ಣೆಗಳ ನಾಡು; ಆಕಾಶದಿಂದ ಮಳೆಬಿದ್ದಂತೆ ನೀರುದೊರಕುತ್ತದೆ.</verse>
				<verse number="12">ಅದು ನಿಮ್ಮ ದೇವರಾದ ಸರ್ವೇಶ್ವರ ಪರಾಂಬರಿಸುವ ನಾಡು; ಸಂವತ್ಸರದ ಪ್ರಾರಂಭ ಮೊದಲುಗೊಂಡು ಕೊನೆಯವರೆಗೂ ಅವರು ಅದನ್ನು ಸದಾ ಕಟಾಕ್ಷಿಸುವರು.</verse>
				<verse number="13">ನಾನು ಈಗ ನಿಮಗೆ ಬೋಧಿಸುವ ಆಜ್ಞೆಗಳಿಗೆ ಲಕ್ಷ್ಯಕೊಟ್ಟು ನಿಮ್ಮ ದೇವರಾದ ಸರ್ವೇಶ್ವರನನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಅವರಿಗೆ ಸೇವೆಸಲ್ಲಿಸಿದರೆ,</verse>
				<verse number="14">ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಆಗುವುದು. ನಿಮ್ಮ ಭೂಮಿಗೆ ಬೇಕಾದ ಮುಂಗಾರು ಹಿಂಗಾರುಗಳನ್ನು ಅವರು ಸರಿಯಾಗಿ ಸುರಿಸುವರು.</verse>
				<verse number="15">ಅಡವಿಯಲ್ಲಿ ದನಕರುಗಳಿಗೆ ಬೇಕಾದಷ್ಟು ಹುಲ್ಲನ್ನು ಕೊಡುವರು; ನೀವು ಆಹಾರದಿಂದ ತೃಪ್ತರಾಗುವಿರಿ.</verse>
				<verse number="16">ಆದರೆ ನೀವು ಎಚ್ಚರಿಕೆಯಿಂದಿರಬೇಕು; ಮರುಳುಗೊಂಡು ಸರ್ವೇಶ್ವರ ಹೇಳಿದ ಮಾರ್ಗವನ್ನು ಬಿಟ್ಟು, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿದರೆ,</verse>
				<verse number="17">ಅವರು ನಿಮ್ಮ ಮೇಲೆ ಸಿಟ್ಟಗೊಂಡು ಮಳೆಬಾರದಂತೆ ಆಕಾಶವನ್ನು ಮುಚ್ಚಿಡಬಹುದು. ಆಗ ಭೂಮಿಯಲ್ಲಿ ಬೆಳೆಯಾಗದೆ ಸರ್ವೇಶ್ವರ ನಿಮಗೆ ಕೊಡುವ ಆ ಉತ್ತಮನಾಡಿನಲ್ಲಿ ನೀವು ಉಳಿಯದೆ ಬೇಗ ನಾಶವಾಗಿಹೋಗುವಿರಿ.</verse>
				<verse number="18">“ಆದುದರಿಂದ ನೀವು ಈ ನನ್ನ ಮಾತುಗಳನ್ನು ನಿಮ್ಮ ಹೃದಯದಲ್ಲೂ ಮನಸ್ಸಿನಲ್ಲೂ ಇಟ್ಟುಕೊಳ್ಳಬೇಕು; ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು; ಇವು ನಿಮ್ಮ ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತಿರಬೇಕು.</verse>
				<verse number="19">ನೀವು ಮನೆಯಲ್ಲಿರುವಾಗಲೂ ಪ್ರಯಾಣದಲ್ಲಿರುವಾಗಲೂ ಮಲಗುವಾಗಲೂ ಏಳುವಾಗಲೂ ಇವುಗಳ ವಿಷಯದಲ್ಲಿ ಮಾತಾಡುತ್ತಾ ನಿಮ್ಮ ಮಕ್ಕಳಿಗೆ ಇವುಗಳನ್ನು ಮನದಟ್ಟಾಗಿಸಬೇಕು.</verse>
				<verse number="20">ನಿಮ್ಮ ಮನೇ ಬಾಗಿಲಿನ ನಿಲುವುಪಟ್ಟಿಗಳ ಹಾಗು ಹೆಬ್ಬಾಗಿಲುಗಳ ಮೇಲೆಯೂ ಇವುಗಳನ್ನೂ ಬರೆಯಬೇಕು.</verse>
				<verse number="21">ಹೀಗೆ ಮಾಡಿದರೆ ಭೂಮಿಯ ಮೇಲೆ ಆಕಾಶ ಎಷ್ಟುಕಾಲ ನಿಂತಿರುವುದೋ ಅಷ್ಟು ಕಾಲವೂ ನೀವು ಹಾಗು ನಿಮ್ಮ ಸಂತತಿಯವರು ನಿಮ್ಮ ಪಿತೃಗಳಿಗೆ ಸರ್ವೇಶ್ವರ ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ಆ ನಾಡಿನಲ್ಲಿ ಬಾಳುವಿರಿ.</verse>
				<verse number="22">“ನಾನು ಬೋಧಿಸುವ ಈ ಧರ್ಮೋಪದೇಶವನ್ನೆಲ್ಲ ನೀವು ಅನುಸರಿಸುವವರಾಗಿ, ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಎಲ್ಲ ವಿಷಯಗಳಲ್ಲೂ ಅವರು ಹೇಳುವ ಮಾರ್ಗದಲ್ಲೇ ನಡೆದು, ಅವರನ್ನೇ ಹೊಂದಿಕೊಂಡಿದ್ದರೆ,</verse>
				<verse number="23">ಅವರು ಆ ಜನಾಂಗಗಳನ್ನೆಲ್ಲ ನಿಮ್ಮ ಬಳಿಯಿಂದ ಹೊರದೂಡುವರು; ನಿಮಗಿಂತಲೂ ಮಹಾಬಲಿಷ್ಠಜನಾಂಗಗಳ ನಾಡನ್ನು ಸ್ವಾಧೀನಮಾಡಿಕೊಳ್ಳುವಿರಿ.</verse>
				<verse number="24">ನೀವು ಹೆಜ್ಜೆಯಿಡುವ ಎಲ್ಲ ಸ್ಥಳಗಳೂ ನಿಮ್ಮದಾಗುವುವು; ಮರುಭೂಮಿ ಮೊದಲುಗೊಂಡು ಲೆಬನೋನ್ ಪರ್ವತದವರೆಗೂ ಮತ್ತು ಯೂಫ್ರೆಟಿಸ್ ನದಿಯಿಂದ ಪಶ್ಚಿಮ ಸಮುದ್ರದವರೆಗೂ ನಿಮ್ಮ ನಾಡು ವ್ಯಾಪಿಸುವುದು.</verse>
				<verse number="25">ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ. ನೀವು ಕಾಲಿಡುವ ಎಲ್ಲ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಹೆದರಿಕೆಯೂ ಉಂಟಾಗುವ ಹಾಗೆ ನಿಮ್ಮ ದೇವರಾದ ಸರ್ವೇಶ್ವರ ತಾನೇ ಹೇಳಿರುವಂತೆ ಮಾಡುವರು.</verse>
				<verse number="26">“ಇಗೋ ನೋಡಿ, ಈ ದಿನ ಆಶೀರ್ವಾದವನ್ನೂ ಶಾಪವನ್ನೂ ನಿಮ್ಮ ಮುಂದೆ ಇಡುತ್ತಾ ಇದ್ದೇನೆ.</verse>
				<verse number="27">ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳಿಗೆ ನೀವು ವಿಧೇಯರಾಗಿ ನಡೆದರೆ, ಆಶೀರ್ವಾದ ನಿಮ್ಮದಾಗುವುದು.</verse>
				<verse number="28">ಈ ಆಜ್ಞೆಗಳಿಗೆ ವಿಧೇಯರಾಗದೆ, ನಾನು ಈಗ ಬೋಧಿಸುವ ಮಾರ್ಗವನ್ನು ಬಿಟ್ಟು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಅವಲಂಬಿಸಿದರೆ, ನಿಮಗೆ ಶಾಪ ತಗಲುವುದು.</verse>
				<verse number="29">“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿದ ನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.</verse>
				<verse number="30">ಆ ಬೆಟ್ಟಗಳು ಜೋರ್ಡನ್ ನದಿಯ ಆಚೆ, ಪಡುವಣ ದಾರಿಯ ಪಶ್ಚಿಮದಲ್ಲಿ ಕಾನಾನ್ಯರು ವಾಸಿಸುವ ಅರಾಬಾ ಪ್ರದೇಶದಲ್ಲಿ, ಗಿಲ್ಗಾಲಿಗೆ ಎದುರಾಗಿ ಮೋರೆ ಎಂಬ ವೃಕ್ಷದ ಬಳಿಯಲ್ಲಿ ಇವೆ.</verse>
				<verse number="31">“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟಬೇಕಾಗಿದೆ. ನೀವು ಆ ನಾಡನ್ನು ವಶಪಡಿಸಿಕೊಂಡು, ಅದರಲ್ಲಿ ವಾಸಮಾಡುವಾಗ,</verse>
				<verse number="32">ನಾನು ಈಗ ನಿಮಗೆ ತಿಳಿಸುವ ಎಲ್ಲ ಆಜ್ಞಾವಿಧಿಗಳನ್ನು ಅನುಸರಿಸಿ ನಡೆಯಲೇಬೇಕು.</verse>
			</chapter>
			<chapter number="12">
				<verse number="1">“ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ನಾಡಿನಲ್ಲೆ ನೀವು ಜೀವಮಾನ ಪರಿಯಂತರ ಅನುಸರಿಸಬೇಕಾದ ಆಜ್ಞಾವಿಧಿಗಳು ಇವು:</verse>
				<verse number="2">“ನೀವು ಸ್ವಾಧೀನಮಾಡಿಕೊಳ್ಳುವ ನಾಡಿನ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೂ ದಿಣ್ಣೆಗಳ ಮೇಲೂ ಹರಡಿಕೊಂಡ ಮರಗಳ ಕೆಳಗೂ ತಮ್ಮ ದೇವರುಗಳನ್ನು ಪೂಜಿಸುತ್ತಾರೆ; ಆ ಸ್ಥಳಗಳನ್ನೆಲ್ಲಾ ನೀವು ಅಗತ್ಯವಾಗಿ ನಾಶಮಾಡಬೇಕು.</verse>
				<verse number="3">ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಕಲ್ಲುಕಂಬಗಳನ್ನು ಒಡೆಯಬೇಕು; ಅಶೇರ ಎಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾ ಪ್ರತಿಮೆಗಳನ್ನು ಪುಡಿಪುಡಿಮಾಡಿ ಆ ದೇವರುಗಳ ಹೆಸರೇ ಉಳಿಯದಂತೆ ಮಾಡಿಬಿಡಬೇಕು.</verse>
				<verse number="4">“ಅವರು ಅನುಸರಿಸುವ ರೀತಿಯಲ್ಲಿ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಪೂಜಿಸಬಾರದು.</verse>
				<verse number="5">ನಿಮ್ಮ ದೇವರಾದ ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳಲು ಹಾಗು ತಾವು ವಾಸಮಾಡಲು ನಿಮ್ಮ ಎಲ್ಲಾ ಕುಲಗಳಿಂದ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ಅವರ ದರ್ಶನಕ್ಕಾಗಿ ಸಭೆಸೇರಬೇಕು.</verse>
				<verse number="6">ನೀವು ಸಮರ್ಪಿಸುವ ದಹನಬಲಿ ಮುಂತಾದ ಯಜ್ಞಗಳ ಪಶುಪ್ರಾಣಿಗಳನ್ನು, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನು ಪ್ರತ್ಯೇಕಿಸುವ ಪದಾರ್ಥಗಳನ್ನು ಮತ್ತು ಹರಕೇಮುಡುಪುಗಳನ್ನು, ಕಾಣಿಕೆಗಳನ್ನು ಹಾಗು ದನಕುರಿಗಳ ಚೊಚ್ಚಲು ಮರಿಗಳನ್ನು ಆ ಸ್ಥಳಕ್ಕೆ ಮಾತ್ರ ತರಬೇಕು.</verse>
				<verse number="7">ಅಲ್ಲಿಯೇ ಅವರ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.</verse>
				<verse number="8">“ನಾವು ಈಗ ಈ ಸ್ಥಳದಲ್ಲಿ ವರ್ತಿಸುವಂತೆ ಎಲ್ಲರೂ ನಡೆದುಕೊಳ್ಳಬೇಕೇ ವಿನಃ ತಮ್ಮ ತಮ್ಮ ಮನಸ್ಸಿಗೆ ತೋರಿದಂತೆ ವರ್ತಿಸಕೂಡದು;</verse>
				<verse number="9">ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಸೇರಿ, ನೀವು ಇನ್ನು ವಿಶ್ರಾಂತಿಹೊಂದಿಲ್ಲ.</verse>
				<verse number="10">ಆದರೆ ನೀವು ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸೊತ್ತಾಗಿ ಕೊಡುವ ಆ ನಾಡಿನಲ್ಲಿ ಮನೆಮಾಡಿಕೊಂಡಿರುವಾಗ ನಿಮ್ಮ ಸುತ್ತಲು ಶತ್ರುಗಳು ಯಾರೂ ಇಲ್ಲದಂತೆ ಸರ್ವೇಶ್ವರ ಮಾಡುವರು;</verse>
				<verse number="11">ಆಗ ನೀವು ನಿರ್ಭಯರಾಗಿ ನಾನು ನಿಮಗೆ ಆಜ್ಞಾಪಿಸಿದ ಎಲ್ಲಾ ಕಾಣಿಕೆಗಳನ್ನು ಅಂದರೆ, ದಹನಬಲಿ ಮುಂತಾದ ಯಜ್ಞಪಶುಗಳನ್ನು, ಬೆಳೆಯ ದಶಮಾಂಶಗಳನ್ನು, ಸರ್ವೇಶ್ವರನಿಗಾಗಿ ಪ್ರತ್ಯೇಕಿಸುವ ಪದಾರ್ಥಗಳನ್ನು, ಹರಕೆಮಾಡಿದ ವಿಶೇಷ ಕಾಣಿಕೆಗಳನ್ನು, ಇವುಗಳನ್ನೆಲ್ಲ ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೇ ತರಬೇಕು.</verse>
				<verse number="12">ನೀವು, ನಿಮ್ಮ ಗಂಡು ಹೆಣ್ಣು ಮಕ್ಕಳು, ದಾಸದಾಸಿಯರು ಹಾಗು ನಿಮ್ಮೊಡನೆ ಸೊತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.</verse>
				<verse number="13">“ನಿಮಗೆ ಇಷ್ಟಬಂದ ಸ್ಥಳಗಳಲ್ಲಿ ದಹನಬಲಿಗಳನ್ನು ಸಮರ್ಪಿಸಬಾರದು. ಎಚ್ಚರಿಕೆ!</verse>
				<verse number="14">ನಿಮ್ಮ ಯಾವುದಾದರೊಂದು ಕುಲದಲ್ಲಿ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲೇ ನಿಮ್ಮ ದಹನಬಲಿಗಳನ್ನು ಸಮರ್ಪಿಸಬೇಕು; ಅಲ್ಲಿಯೇ ನಾನು ಆಜ್ಞಾಪಿಸುವ ಎಲ್ಲಾ ಆಚಾರಗಳನ್ನು ನಡೆಸಬೇಕು.</verse>
				<verse number="15">ಆದರೆ ನೀವು ಎಲ್ಲ ಊರುಗಳಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಅಭಿವೃದ್ಧಿಪಡಿಸುವ ಮೇರೆಗೆ ಪಶುಪ್ರಾಣಿಗಳನ್ನು ಇಷ್ಟಾನುಸಾರ ಕೊಯ್ದು ಊಟಮಾಡಬಹುದು. ಶುದ್ಧರೂ ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನೂ ತಿನ್ನಬಹುದು.</verse>
				<verse number="16">ರಕ್ತವನ್ನು ಮಾತ್ರ ಸೇವಿಸಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.</verse>
				<verse number="17">“ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನು, ದನಕುರಿಗಳ ಚೊಚ್ಚಲು ಮರಿಗಳನ್ನು, ಹರಕೆಮಾಡಿದ ಪದಾರ್ಥಗಳನ್ನು, ಕಾಣಿಕೆಗಳನ್ನು ಹಾಗು ಯಾಜಕರಿಗಾಗಿ ಪ್ರತ್ಯೇಕಿಸಿದ ಪದಾರ್ಥಗಳನ್ನು ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.</verse>
				<verse number="18">ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ, ಅವರ ಸನ್ನಿಧಿಯಲ್ಲೇ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷದಿಂದಿರಬೇಕು; ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಆಳುಗಳು ಹಾಗು ನಿಮ್ಮ ಊರಲ್ಲಿರುವ ಲೇವಿಯರು ಇಂಥವುಗಳನ್ನು ಊಟಮಾಡಬೇಕು.</verse>
				<verse number="19">ನೀವು ನಿಮ್ಮ ನಾಡಿನಲ್ಲಿ ಇರುವ ತನಕ ಲೇವಿಯರನ್ನು ಕೈಬಿಡಬಾರದು; ಇದು ನೆನಪಿರಲಿ.</verse>
				<verse number="20">“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ವಾಗ್ದಾನ ಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿದಾಗ ನೀವು ಮಾಂಸಾಹಾರವನ್ನು ಮಾಡುವುದಕ್ಕೆ ಇಷ್ಟಪಟ್ಟರೆ ಮಾಡಬಹುದು.</verse>
				<verse number="21">ನಿಮ್ಮ ದೇವರಾದ ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸಲು ಆರಿಸಿಕೊಳ್ಳುವ ಸ್ಥಳ ನಿಮಗೆ ದೂರವಾದರೆ, ಅವರು ನಿಮಗೆ ಅನುಗ್ರಹಿಸಿದ ದನಕುರಿಗಳಲ್ಲಿ ಬೇಕಾದಷ್ಟನ್ನು, ನಾನು ಅಪ್ಪಣೆಕೊಟ್ಟ ಮೇರೆಗೆ, ನೀವು ಕೊಯ್ದು ನಿಮ್ಮ ಊರಲ್ಲೇ ಊಟಮಾಡಬಹುದು.</verse>
				<verse number="22">ಜಿಂಕೆ ದುಪ್ಪಿಗಳನ್ನು ಶುದ್ಧರೂ ಅಶುದ್ಧರೂ ತಿನ್ನುವ ಪ್ರಕಾರ ದನಕುರಿಗಳನ್ನೂ ತಿನ್ನಬಹುದು.</verse>
				<verse number="23">“ಆದರೆ ರಕ್ತ ಜೀವಾಧಾರವಾದುದರಿಂದ ಮಾಂಸದೊಡನೆ ರಕ್ತವನ್ನು ಸೇವಿಸಲೇಕೂಡದೆಂಬುದನ್ನು ಜ್ಞಾಪಕದಲ್ಲಿಡಿ. ಮಾಂಸದೊಡನೆ ಅದರ ಜೀವಾಧಾರವನ್ನು ತಿನ್ನಬಾರದು.</verse>
				<verse number="24">ಅದನ್ನು ಭುಜಿಸದೆ ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.</verse>
				<verse number="25">ನೀವು ಅದನ್ನು ಸೇವಿಸದೆ ಸರ್ವೇಶ್ವರನಿಗೆ ಮೆಚ್ಚಿಗೆಯಾಗಿರುವುದನ್ನೇ ಮಾಡಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವುದು.</verse>
				<verse number="26">“ಆದರೆ ನಿಮ್ಮ ಬಳಿಯಿರುವ ದೇವರ ವಸ್ತುಗಳನ್ನು ಹಾಗು ಹರಕೆಮಾಡಿದ್ದನ್ನೂ ಸರ್ವೇಶ್ವರ ಆರಿಸಿಕೊಂಡ ಸ್ಥಳಕ್ಕೇ ತೆಗೆದುಕೊಂಡು ಹೋಗಬೇಕು.</verse>
				<verse number="27">ದಹನಬಲಿಗಳನ್ನು ಸಮರ್ಪಿಸುವಾಗ ರಕ್ತಮಾಂಸಗಳೆರಡನ್ನೂ ನಿಮ್ಮ ದೇವರಾದ ಸರ್ವೇಶ್ವರನ ಬಲಿಪೀಠದಲ್ಲಿ ದಹಿಸಿಬಿಡಬೇಕು. ಮಿಕ್ಕಬಲಿಗಳನ್ನು ಅರ್ಪಿಸುವಾಗ ರಕ್ತವನ್ನು ಸರ್ವೇಶ್ವರನ ಬಲಿಪೀಠದ ಮೇಲೆ ಸುರಿದುಬಿಟ್ಟು, ಮಾಂಸವನ್ನು ಊಟಮಾಡಬೇಕು.</verse>
				<verse number="28">“ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು, ಅವುಗಳನ್ನು ಅನುಸರಿಸಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವುದು. ಏಕೆಂದರೆ ಹೀಗೆ ಮಾಡುವುದರಿಂದ ನಿಮ್ಮ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಸರಿಯಾದುದನ್ನೂ ಸೂಕ್ತವಾದುದನ್ನೂ ಮಾಡುತ್ತೀರಿ.</verse>
				<verse number="29">“ನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡಿನ ಜನಾಂಗಗಳನ್ನು, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮುಂದೆ ನಾಶಮಾಡಿದ ತರುವಾಯ, ನೀವು ಅವರ ನಾಡನ್ನು ತೆಗೆದುಕೊಂಡು ಅದರಲ್ಲಿ ವಾಸವಾಗಿರುವಿರಿ.</verse>
				<verse number="30">ಆಗ ನೀವು ಭ್ರಮೆಗೊಂಡು, ನಿಮ್ಮ ಮುಂದೆ ನಾಶವಾದವರ ದುಷ್ಟ ಪದ್ಧತಿಗಳನ್ನು ಅನುಸರಿಸದಂತೆ ಜಾಗರೂಕರಾಗಿರಿ; ‘ಈ ನಾಡಿನ ಜನರು ತಮ್ಮ ದೇವರುಗಳನ್ನು ಹೇಗೆ ಪೂಜಿಸುತ್ತಿದ್ದರೋ ಹಾಗೆಯೇ ನಾವೂ ಪೂಜಿಸುವೆವು’ ಎಂದು ಹೇಳಿಕೊಂಡು ಅವರ ದೇವರುಗಳ ಬಗ್ಗೆ ಎಷ್ಟು ಮಾತ್ರವೂ ಕೇಳಿತಿಳಿದುಕೊಳ್ಳಬೇಡಿ.</verse>
				<verse number="31">ಸರ್ವೇಶ್ವರನಿಗೆ ಅಸಹ್ಯವಾಗಿರುವ ಹಲವು ಹೇಸಿಗೆ ಕೆಲಸಗಳನ್ನು ಅವರು ತಮ್ಮ ದೇವತೆಗಳಿಗೆ ಮಾಡುತ್ತಾರೆ; ತಮ್ಮ ಗಂಡುಹೆಣ್ಣು ಮಕ್ಕಳನ್ನು ತಮ್ಮ ದೇವತೆಗಳಿಗೆ ಬೆಂಕಿಯಲ್ಲಿ ಸುಟ್ಟುಬಿಡುತ್ತಾರೆ. ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮಾಡುವ ಸೇವೆ ಹಾಗಿರಬಾರದು.</verse>
			</chapter>
			<chapter number="13">
				<verse number="1">“ನಿಮ್ಮ ಮಧ್ಯೆ ಯಾವ ಪ್ರವಾದಿಯೆ ಆಗಲಿ, ಕನಸುಗಾರನೇ ಆಗಲಿ, ಎದ್ದು ಬಂದು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚನೆಮಾಡಿ</verse>
				<verse number="2">‘ಈ ದೇವತೆಗಳನ್ನು ಅವಲಂಬಿಸಿ ಪೂಜಿಸೋಣ’ ಎಂದು ಬೋಧಿಸಬಹುದು; ಆ ಬೋಧನೆಯನ್ನು ರುಜುವಾತು ಪಡಿಸಲು ಒಂದು ಅದ್ಭುತವನ್ನಾಗಲಿ, ಮಹತ್ಕಾರ್ಯವನ್ನಾಗಲಿ ತೋರಿಸಿಕೊಡುತ್ತೇನೆಂದು ಹೇಳಬಹುದು.</verse>
				<verse number="3">ಅವನು ಹೇಳಿದಂತೆಯೇ ನಡೆದರೂ ನೀವು ಅವನ ಮಾತಿಗೆ ಕಿವಿಗೊಡಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರನನ್ನು ನೀವು ಪೂರ್ಣ ಹೃದಯದಿಂದ, ಪೂರ್ಣ ಮನಸ್ಸಿನಿಂದ ಪ್ರೀತಿಸುತ್ತೀರೊ ಇಲ್ಲವೋ ಎಂಬುದನ್ನು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಪರೀಕ್ಷಿಸುತ್ತಾರೆ.</verse>
				<verse number="4">ಸರ್ವೇಶ್ವರ ಹೇಳುವ ಮಾರ್ಗದಲ್ಲೇ ನೀವು ನಡೆದು, ಅವರಲ್ಲಿಯೇ ಭಯಭಕ್ತಿ ಯಳ್ಳವರಾಗಿ, ಅವರ ಆಜ್ಞೆಗಳನ್ನೇ ಅನುಸರಿಸಿ, ಅವರಿಗೇ ವಿಧೇಯರಾಗಿ, ಅವರ ಸೇವೇಮಾಡುತ್ತಾ ಅವರನ್ನೇ ಹೊಂದಿಕೊಂಡಿರಬೇಕು.</verse>
				<verse number="5">ಆ ಪ್ರವಾದಿಗೆ ಅಥವಾ ಆ ಕನಸುಗಾರನಿಗೆ ಮರಣಶಿಕ್ಷೆಯಾಗಬೇಕು. ಗುಲಾಮಗಿರಿಯಲ್ಲಿ ಇದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಸರ್ವೇಶ್ವರ ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕು ಎಂದಿದ್ದರೆ, ಅಂಥವನನ್ನು ಕೊಲ್ಲಿಸಿ, ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೊಡೆದುಹಾಕಬೇಕು.</verse>
				<verse number="6">“ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ, ನಿಮಗೆ ಅಥವಾ ನಿಮ್ಮ ಪಿತೃಗಳಿಗೆ ಗೊತ್ತಿಲ್ಲದ ಇತರ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಒಳ ಒಳಗೇ ನಿಮಗೆ ಬೋಧಿಸಬಹುದು.</verse>
				<verse number="7">ಆ ದೇವರುಗಳು ಹತ್ತಿರವಿರುವ ಜನಾಂಗಗಳ ದೇವರುಗಳಾಗಿದ್ದರೂ ದೂರವಾದವರ ದೇವರುಗಳಾಗಿದ್ದರೂ ಭೂಲೋಕದ ಯಾವ ಭಾಗದವರ ದೇವರುಗಳಾಗಿದ್ದರೂ</verse>
				<verse number="8">ನೀವು ಸಮ್ಮತಿಸಲೂ ಬಾರದು; ಕಿವಿಗೊಡಲೂ ಬಾರದು. ಅಂಥವನನ್ನು ಕನಿಕರಿಸಕೂಡದು, ತಪ್ಪಿಸಕೂಡದು, ಬಚ್ಚಿಡಕೂಡದು; ಬದಲಿಗೆ ಕೊಲ್ಲಿಸಲೇಬೇಕು.</verse>
				<verse number="9">ಆ ಶಿಕ್ಷೆಯನ್ನು ನಡೆಸುವಾಗ ತಪ್ಪು ಕಂಡವನೇ ಮೊದಲು ಕಲ್ಲೆಸೆಯಬೇಕು; ತರುವಾಯ ಜನರೆಲ್ಲರೂ ಎಸೆಯಲಿ.</verse>
				<verse number="10">ಗುಲಾಮಗಿರಿಯಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಈಜಿಪ್ಟ್ ದೇಶದಿಂದ ಕರೆದುತಂದ ನಿಮ್ಮ ದೇವರಾದ ಸರ್ವೇಶ್ವರನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದು ಇದ್ದುದರಿಂದ ಅಂಥವನನ್ನು ಕಲ್ಲು ಎಸೆದು ಕೊಲ್ಲಬೇಕು.</verse>
				<verse number="11">ಇದನ್ನು ಇಸ್ರಯೇಲರೆಲ್ಲರು ಕೇಳಿ, ಭಯಪಟ್ಟು, ಅಂಥ ದುಷ್ಕಾರ್ಯವನ್ನು ಮುಂದೆ ಮಾಡರು.</verse>
				<verse number="12">“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ನಿವಾಸಕ್ಕಾಗಿ ಕೊಡುವ ಯಾವುದಾದರೂ ಒಂದು ಊರಿನ ವಿಷಯವನ್ನು ತೆಗೆದುಕೊಳ್ಳೋಣ.</verse>
				<verse number="13">ಅಲ್ಲಿ ವಾಸವಾಗಿರುವ ಇಸ್ರಯೇಲರಲ್ಲಿ ಕೆಲವು ಮಂದಿ ದುಷ್ಟರು, ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ಸೂಚಿಸಬಹುದು. ‘ಆ ದೇವರುಗಳನ್ನು ಪೂಜಿಸೋಣ ಬನ್ನಿ’ ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಬಹುದು.</verse>
				<verse number="14">ಆ ಸುದ್ದಿಯನ್ನು ನೀವು ಕೇಳಿದರೆ, ಆ ಸಂಗತಿಯನ್ನು ಚೆನ್ನಾಗಿ ವಿಚಾರಿಸಿ ತಿಳಿದುಕೊಳ್ಳಬೇಕು. ಅಂಥ ಅಸಹ್ಯಕಾರ್ಯ ಇಸ್ರಯೇಲರಲ್ಲಿ ನಡೆದದ್ದು ನಿಜವೆಂದು ತಿಳಿದುಬಂದರೆ,</verse>
				<verse number="15">ಆ ಊರನ್ನು ಸಂಪೂರ್ಣವಾಗಿ ಹಾಳುಮಾಡಬೇಕು. ಅದರಲ್ಲಿ ಇರುವ ಎಲ್ಲ ಜನರನ್ನೂ ಜಾನುವಾರುಗಳನ್ನೂ ಕತ್ತಿಯಿಂದ ಸಂಹರಿಸಿಬಿಡಬೇಕು.</verse>
				<verse number="16">ಅದರಲ್ಲಿ ಇರುವ ಎಲ್ಲ ಸಾಮಗ್ರಿಗಳನ್ನು ಗ್ರಾಮಮಧ್ಯದಲ್ಲಿ ಕೂಡಿಸಿ, ಊರನ್ನೂ, ಅದರಲ್ಲಿರುವ ಎಲ್ಲ ಸಾಮಾನುಗಳನ್ನೂ ನಿಮ್ಮ ದೇವರಾದ ಸರ್ವೇಶ್ವರನಿಗೆ ನಿಶ್ಯೇಷವಾಗಿ ಸುಟ್ಟುಬಿಡಬೇಕು. ಅದು ಪುನಃ ಯಾವಾಗಲೂ ಹಾಳುದಿಬ್ಬವಾಗಿರಬೇಕು. ಅದನ್ನು ಪುನಃ ಕಟ್ಟಬಾರದು.</verse>
				<verse number="17">ಆ ಶಾಪಗ್ರಸ್ತ ವಸ್ತುಗಳಲ್ಲಿ ನೀವು ಸ್ವಲ್ಪವನ್ನಾದರೂ ತೆಗೆದುಕೊಳ್ಳಬಾರದು.</verse>
				<verse number="18">ನೀವು ಹೀಗೆ ನಡೆದು, ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಅವರ ಎಲ್ಲ ಆಜ್ಞೆಗಳನ್ನು ಕೈಗೊಂಡು ಅವರ ದೃಷ್ಟಿಗೆ ಸರಿಯಾದದ್ದನ್ನು ಮಾಡಿದರೆ, ಅವರು ರೋಷಾಗ್ನಿಯನ್ನು ತಡೆದು, ನಿಮಗೆ ದಯೆಯನ್ನು ತೋರಿಸಿ, ನಿಮ್ಮನ್ನು ಕರುಣಿಸುವರು; ತಾವು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ಸಂತತಿಯನ್ನು ಅಭಿವೃದ್ಧಿಗೊಳಿಸುವರು.</verse>
			</chapter>
			<chapter number="14">
				<verse number="1">“ನೀವು ನಿಮ್ಮ ದೇವರಾದ ಸರ್ವೇಶ್ವರನ ಮಕ್ಕಳು. ಆದುದರಿಂದ ಸತ್ತವರಿಗಾಗಿ ನಿಮ್ಮ ದೇಹವನ್ನು ಗಾಯಮಾಡಿಕೊಳ್ಳಬಾರದು; ನಿಮ್ಮ ಮುಂದಲೆಯನ್ನು ಬೋಳಿಸಿಕೊಳ್ಳಬಾರದು.</verse>
				<verse number="2">ಏಕೆಂದರೆ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲು ಜನ. ಅವರು ಜಗದಲ್ಲಿರುವ ಸಮಸ್ತಜನಾಂಗಗಳಲ್ಲಿ ನಿಮ್ಮನ್ನೇ ಸ್ವಕೀಯಜನರಾಗುವುದಕ್ಕೆ ಆರಿಸಿಕೊಂಡಿದ್ದಾರೆ.</verse>
				<verse number="3">“ನಿಷಿದ್ಧವಾಗಿರುವ ಯಾವುದನ್ನೂ ನೀವು ತಿನ್ನಕೂಡದು.</verse>
				<verse number="4">ನೀವು ತಿನ್ನಬಹುದಾದ ಪಶುಜಾತಿಗಳು</verse>
				<verse number="5">ಯಾವುವೆಂದರೆ - ದನ, ಕುರಿ, ಆಡು, ದುಪ್ಪಿ, ಜಿಂಕೆ, ಸಾರಂಗ, ಕಾಡುಮೇಕೆ, ಚಿಗರಿ, ಕಡವೆ, ಕೊಂಡಗುರಿ ಇವುಗಳೇ.</verse>
				<verse number="6">ಯಾವ ಪ್ರಾಣಿಯ ಕಾಲ್ಗೊರಸು ಸೀಳಿದೆಯೋ, ಅದು ಮೆಲುಕು ಹಾಕುವಂಥದ್ದಾದರೆ ಅದರ ಮಾಂಸವನ್ನು ತಿನ್ನಬಹುದು.</verse>
				<verse number="7">ಆದರೆ ಯಾವ ಪ್ರಾಣಿ ಮೆಲುಕು ಹಾಕಿದರೂ ಗೊರಸು ಸೀಳಿರುವುದಿಲ್ಲವೋ ಮತ್ತು ಯಾವ ಪ್ರಾಣಿಯ ಗೊರಸು ಸೀಳಿದ್ದರೂ ಮೆಲುಕು ಹಾಕುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಬಾರದು. ಉದಾಹರಣೆಗೆ, ಒಂಟೆ, ಮೊಲ, ಬೆಟ್ಟದ ಮೊಲ ಇವುಗಳು ಮೆಲುಕು ಹಾಕುವಂಥವುಗಳಾದರೂ ಸೀಳುಗೊರಸು ಇಲ್ಲವಾದ ಕಾರಣ ಅವು ನಿಮಗೆ ಅಶುದ್ಧ.</verse>
				<verse number="8">ಹಂದಿಯ ಗೊರಸು ಸೀಳಿದ್ದರೂ ಅದು ಮೆಲುಕು ಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಕೂಡದು; ಇವುಗಳ ಹೆಣವನ್ನು ಮುಟ್ಟಕೂಡದು.</verse>
				<verse number="9">“ಜಲಜಂತುಗಳಲ್ಲಿ ನೀವು ತಿನ್ನಬಹುದಾದವುಗಳು ಯಾವುವೆಂದರೆ - ಯಾವ ಜಾತಿಯ ಪ್ರಾಣಿಗೆ ರೆಕ್ಕೆ ಇದ್ದು ಮೈಯೆಲ್ಲಾ ಪರೆಪರೆ ಆಗಿರುವುದೋ ಅದರ ಮಾಂಸವನ್ನು ತಿನ್ನಬಹುದು.</verse>
				<verse number="10">ಯಾವ ಜಾತಿಗೆ ರೆಕ್ಕೆಯೂ ಪರೆಪರೆಯಾದ ಮೈಯೂ ಇರುವುದಿಲ್ಲವೋ ಅವುಗಳ ಮಾಂಸವನ್ನು ನೀವು ತಿನ್ನಕೂಡದು; ಅದು ನಿಮಗೆ ಅಶುದ್ಧ.</verse>
				<verse number="11">“ಎಲ್ಲ ಶುದ್ಧಪಕ್ಷಿಗಳ ಮಾಂಸವನ್ನು ತಿನ್ನಬಹುದು.</verse>
				<verse number="12">ತಿನ್ನಕೂಡದವುಗಳು ಯಾವುವು ಎಂದರೆ - ಗರುಡ,</verse>
				<verse number="13">ಬೆಟ್ಟದ ಹದ್ದು, ಕ್ರೌಂಚ, ಗಿಡುಗ, ಹಕ್ಕಿಸಾಲೆ, ಸಕಲವಿಧವಾದ ಹದ್ದು,</verse>
				<verse number="14">ಸಕಲವಿಧವಾದ ಕಾಗೆ, ಉಷ್ಟ್ರಪಕ್ಷಿ, ಉಲೂಕ, ಕಡಲ್ಹಕ್ಕಿ, ಸಕಲವಿಧವಾದ ಡೇಗೆ,</verse>
				<verse number="15"></verse>
				<verse number="16">ಗೂಬೆ, ಹೆಗ್ಗೂಬೆ, ಕರೇಟು, ಚೀಲಮೂಗಿ, ರಣಹದ್ದು,</verse>
				<verse number="17"></verse>
				<verse number="18">ನೀರುಕಾಗೆ, ಕೊಕ್ಕರೆ, ಸಕಲವಿಧವಾದ ಬಕ, ಹೆಡೆಹಕ್ಕಿ, ಕಣ್ಣಕಪಡಿ.</verse>
				<verse number="19">“ರೆಕ್ಕೆಯುಳ್ಳ ಕ್ರಿಮಿಕೀಟಗಳೆಲ್ಲವು ನಿಮಗೆ ಅಶುದ್ಧ; ಅವುಗಳನ್ನು ತಿನ್ನಕೂಡದು.</verse>
				<verse number="20">ರೆಕ್ಕೆ ಉಳ್ಳ ಪಕ್ಷಿಗಳಲ್ಲಿ ಶುದ್ಧಜಾತಿಯವುಗಳನ್ನು ಮಾತ್ರ ತಿನ್ನಬಹುದು.</verse>
				<verse number="21">“ಸತ್ತುಬಿದ್ದದ್ದನ್ನು ನೀವು ತಿನ್ನಕೂಡದು; ನಿಮ್ಮ ಊರಲ್ಲಿರುವ ಪರದೇಶಿಯರಿಗೆ ಅದನ್ನು ತಿನ್ನುವುದಕ್ಕೆ ಕೊಡಬಹುದು, ಅನ್ಯರಿಗೆ ಮಾರಬಹುದು; ನೀವಾದರೋ ನಿಮ್ಮ ದೇವರಾದ ಸರ್ವೇಶ್ವರನಿಗೆ ಪ್ರತಿಷ್ಠಿತರಾದವರು. “ಆಡುಮರಿಯ ಮಾಂಸವನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಕೂಡದು.</verse>
				<verse number="22">“ಪ್ರತಿ ವರ್ಷದ ನಿಮ್ಮ ಹೊಲದ ಬೆಳೆಯಲ್ಲಿ ದಶಮಭಾಗವನ್ನು ಪ್ರತ್ಯೇಕಿಸಬೇಕು.</verse>
				<verse number="23">ಧಾನ್ಯ, ದ್ರಾಕ್ಷಿ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನು ಹಾಗು ದನಕುರಿಗಳ ಚೊಚ್ಚಲು ಮರಿಗಳನ್ನು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅವರು ತಮ್ಮ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ, ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಸರ್ವೇಶ್ವರನಲ್ಲೇ ಯಾವಾಗಲು ಭಯಭಕ್ತಿಯುಳ್ಳವರಾಗಿ ಇರುವುದನ್ನು ಅಭ್ಯಾಸಮಾಡಿಕೊಳ್ಳುವಿರಿ.</verse>
				<verse number="24">“ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳ ನಿಮಗೆ ದೂರವಾಗಿದ್ದು, ಆ ಕಾಣಿಕೆಗಳನ್ನು ಅಷ್ಟು ದೂರ ಹೊತ್ತುಕೊಂಡು ಹೋಗುವುದು ಅಸಾಧ್ಯವಾದರೆ, ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅಭಿವೃದ್ಧಿಯನ್ನುಂಟುಮಾಡುವ ಕಾಲದಲ್ಲಿ ಅವುಗಳನ್ನು ಮಾರಿಬಿಡಬಹುದು.</verse>
				<verse number="25">ಹೀಗೆ ಮಾರಿ, ಬಂದ ಹಣವನ್ನು ಸರ್ವೇಶ್ವರ ಆರಿಸಿಕೊಂಡ ಸ್ಥಳಕ್ಕೆ ತೆಗೆದುಕೊಂಡು ಹೋಗಿ,</verse>
				<verse number="26">ಅಲ್ಲಿ ನಿಮ್ಮ ಇಷ್ಟಾನುಸಾರ ದನ, ಕುರಿ, ದ್ರಾಕ್ಷಾರಸ, ಮದ್ಯ ಮೊದಲಾದವುಗಳನ್ನು ಕೊಂಡುಕೊಂಡು ನೀವೂ ನಿಮ್ಮ ಮನೆಯವರೂ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಊಟಮಾಡಿ ಸಂತೋಷವಾಗಿರಬೇಕು.</verse>
				<verse number="27">ಲೇವಿಯರಿಗೆ ನಿಮ್ಮ ಹಾಗೆ ಯಾವ ಸ್ವಂತ ಸೊತ್ತು ಇಲ್ಲವಾದುದರಿಂದ ನೀವು ಅವರನ್ನು ಕೈಬಿಡಬಾರದು.</verse>
				<verse number="28">“ಪ್ರತಿ ಮೂರನೆಯ ವರ್ಷದ ಬೆಳೆಯ ದಶಮಭಾಗವನ್ನು ತಂದು ನೀವಿರುವ ಊರಲ್ಲಿಯೇ ಕೂಡಿಸಬೇಕು.</verse>
				<verse number="29">ಆಗ ಊರಲ್ಲಿರುವ ಅನ್ಯದೇಶದವರು, ತಾಯಿತಂದೆಯಿಲ್ಲದವರು, ವಿಧವೆಯರು ಹಾಗು ನಿಮ್ಮ ಹಾಗೆ ಸ್ವಂತ ಸೊತ್ತು ಹೊಂದದೆಯಿರುವ ಲೇವಿಯರೂ ಉಂಡು ಸಂತೋಷವಾಗಿರುವರು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಸಫಲಗೊಳಿಸುವರು.</verse>
			</chapter>
			<chapter number="15">
				<verse number="1">“ಏಳು ಸಂವತ್ಸರಗಳು ಕಳೆದನಂತರ ಬಡವರಿಗೆ ಬಿಡುಗಡೆ ಸಿಗಬೇಕು.</verse>
				<verse number="2">ಹೇಗೆಂದರೆ, ಸರ್ವೇಶ್ವರನೇ ನೇಮಿಸಿದ ಬಿಡುಗಡೆಯ ಸಂವತ್ಸರ ಪ್ರಕಟವಾಗಿದೆ. ಆದುದರಿಂದ ಸಾಲಕೊಟ್ಟವನು ತೆಗೆದುಕೊಂಡವನಿಗೆ ಆ ಸಾಲವನ್ನು ಬಿಟ್ಟುಬಿಡಬೇಕು; ಅವನು ಸ್ವದೇಶದವನಿಗೆ ಕೊಟ್ಟ ಸಾಲವನ್ನು ಕೇಳಬಾರದು.</verse>
				<verse number="3">ಅನ್ಯದೇಶದವರಿಗೆ ಕೊಟ್ಟ ಸಾಲವನ್ನು ಕೇಳಿ ತೆಗೆದುಕೊಳ್ಳಬಹುದೇ ಹೊರತು ಸ್ವದೇಶದವನಿಗೆ ಕೊಟ್ಟದ್ದನ್ನು ಕೇಳಕೂಡದು.</verse>
				<verse number="4">“ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಟ್ಟು, ನಾನು ಈಗ ನಿಮಗೆ ಬೋಧಿಸುವ ಈ ಧರ್ಮೋಪದೇಶವನ್ನೆಲ್ಲಾ ಅನುಸರಿಸಿದರೆ, ಸರ್ವೇಶ್ವರ ನಿಮಗೆ ಸ್ವದೇಶವಾಗಿ ಕೊಡುವ ನಾಡಿನಲ್ಲಿ ನಿಮ್ಮನ್ನು ಅಭಿವೃದ್ಧಿಪಡಿಸುವರು. ಈ ಕಾರಣ, ನಿಮ್ಮಲ್ಲಿ ಬಡವರೇ ಇರುವುದಿಲ್ಲ.</verse>
				<verse number="5"></verse>
				<verse number="6">ನಿಮ್ಮ ದೇವರಾದ ಸರ್ವೇಶ್ವರ ವಾಗ್ದಾನಮಾಡಿದಂತೆ ನಿಮ್ಮನ್ನು ಅಭಿವೃದ್ಧಿಪಡಿಸುವರು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಅವರಿಂದ ಸಾಲ ತೆಗೆದುಕೊಳ್ಳುವುದಿಲ್ಲ; ಅನೇಕ ಜನಾಂಗಗಳ ಮೇಲೆ ದೊರೆತನ ಮಾಡುವಿರೇ ಹೊರತು ಅವರು ನಿಮ್ಮ ಮೇಲೆ ದೊರೆತನ ಮಾಡುವುದಿಲ್ಲ.</verse>
				<verse number="7">“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡಿನ ಯಾವ ಊರಲ್ಲಿಯಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನ ಬಗ್ಗೆ ಮನಸ್ಸನ್ನು ಕಠಿಣಮಾಡಿಕೊಳ್ಳಬೇಡಿ. ಅವನಿಗೆ ಸಹಾಯಮಾಡದೆ ಇರಬೇಡಿ.</verse>
				<verse number="8">ನೀವು ಕೈದೆರೆದು ಅವನಿಗೆ ಅಗತ್ಯವಾಗಿ ಬೇಕಾದುದನ್ನು ಕೊಟ್ಟು ಸಹಾಯಮಾಡಬೇಕು.</verse>
				<verse number="9">ಬಿಡುಗಡೆಯಾಗುವ ಏಳನೆಯ ವರ್ಷ ಸಮೀಪಿಸಿಬಿಟ್ಟಿತು ಎಂದು ನೀಚವಾದ ಆಲೋಚನೆಮಾಡಿ, ಬಡ ಸಹೋದರನ ಬಗ್ಗೆ ಮೋರೆ ಕರ್ರಗೆಮಾಡಿಕೊಂಡು, ಅವನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಸಹಾಯವನ್ನು ನಿರಾಕರಿಸಿದರೆ, ಅವನು ನಿಮ್ಮ ಬಗ್ಗೆ ಸರ್ವೇಶ್ವರನಿಗೆ ಮೊರೆ ಇಡುವನು; ಆಗ ನೀವು ದೋಷಿಗಳಾಗುತ್ತೀರಿ.</verse>
				<verse number="10">ಕೊಡುವಾಗ ನೀವು ಬೇಸರಗೊಳ್ಳದೆ ಉದಾರ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಕೆಲಸಕಾರ್ಯಗಳಲ್ಲೂ ಪ್ರಯತ್ನಗಳಲ್ಲೂ ನಿಮ್ಮನ್ನು ಅಭಿವೃದ್ಧಿಪಡಿಸುವರು.</verse>
				<verse number="11">ನಾಡಿನಲ್ಲಿ ಯಾವಾಗಲೂ ಬಡವರು ಇದ್ದೇ ಇರುವರು; ಆದುದರಿಂದ ನೀವು ಸ್ವದೇಶದವರಾದ ಬಡವರಿಗೂ ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕೆಂದು ಆಜ್ಞಾಪಿಸಿದ್ದೇನೆ.</verse>
				<verse number="12">“ಸ್ವದೇಶದವರಲ್ಲಿ ಯಾವ ಹಿಬ್ರಿಯ ಪುರುಷನಾಗಲಿ, ಸ್ತ್ರೀಯಾಗಲಿ ನಿಮಗೆ ಗುಲಾಮರಾಗಿ ಮಾರಲ್ಪಟ್ಟಿದ್ದರೆ ಅಂಥವರು ಆರು ವರ್ಷಗಳವರೆಗೂ ನಿಮ್ಮ ಸೇವೆ ಮಾಡಲಿ, ಏಳನೆಯ ವರ್ಷದಲ್ಲಿ ನೀವು ಅವರನ್ನು ಬಿಟ್ಟುಬಿಡಬೇಕು.</verse>
				<verse number="13">ಬಿಡುವಾಗ ಬರಿಗೈಯಲ್ಲಿ ಕಳುಹಿಸಿಬಿಡಬಾರದು.</verse>
				<verse number="14">ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅನುಗ್ರಹಿಸಿರುವ ಮೇರೆಗೆ ನಿಮಗಿರುವ ಆಡುಕುರಿಗಳು, ದವಸಧಾನ್ಯ, ದ್ರಾಕ್ಷರಸ ಇವುಗಳಲ್ಲಿ ಉದಾರವಾಗಿ ಕೊಟ್ಟುಕಳುಹಿಸಬೇಕು.</verse>
				<verse number="15">ಈಜಿಪ್ಟ್ ದೇಶದಲ್ಲಿ ನೀವೇ ಗುಲಾಮರಾಗಿದ್ದಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಬಿಡುಗಡೆ ಮಾಡಿದರೆಂಬುದನ್ನು ಜ್ಞಾಪಕಮಾಡಿಕೊಳ್ಳಿ. ಇದಕ್ಕಾಗಿಯೇ, ನಾನೀಗ ಈ ಆಜ್ಞೆಯನ್ನು ನಿಮಗೆ ಕೊಟ್ಟಿದ್ದೇನೆ.</verse>
				<verse number="16">“ಒಂದು ವೇಳೆ ಅಂಥ ಗುಲಾಮನು ನಿಮ್ಮ ಬಳಿ ಸುಖವಾಗಿದ್ದು, ನಿಮ್ಮನ್ನೂ ನಿಮ್ಮ ಮನೆಯವರನ್ನೂ ಪ್ರೀತಿಸಿ, ತಾನು ಬಿಡುಗಡೆ ಆಗಿ ಹೋಗಲು ಒಲ್ಲೆನೆಂದು ಹೇಳಬಹುದು;</verse>
				<verse number="17">ಆಗ ನೀವು ದಬ್ಬಳದಿಂದ ಅವನ ಕಿವಿಯನ್ನು ಚುಚ್ಚಿ ಕದಕ್ಕೆ ಸಿಕ್ಕಿಸಬೇಕು. ಆ ದಿನ ಮೊದಲ್ಗೊಂಡು ಅವನು ನಿಮಗೆ ಶಾಶ್ವತ ಗುಲಾಮನಾಗಿರುತ್ತಾನೆ. ಅದೇ ರೀತಿಯಲ್ಲಿ ಗುಲಾಮಸ್ತ್ರೀಯರ ವಿಷಯದಲ್ಲೂ ನಡೆದುಕೊಳ್ಳಬೇಕು.</verse>
				<verse number="18">“ಗುಲಾಮನನ್ನು ಬಿಡುಗಡೆ ಮಾಡುವುದು ಕಷ್ಟವೆಂದು ಹೇಳಿಕೊಳ್ಳಬಾರದು. ಅವನು ಆರು ವರ್ಷಗಳು ನಿಮ್ಮ ಗುಲಾಮನಾಗಿದ್ದು ಕೂಲಿಯಾಳಿಗಿಂತ ಎರಡರಷ್ಟು ಪ್ರಯೋಜನವನ್ನು ಉಂಟುಮಾಡಿದನಲ್ಲವೆ? ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಸಫಲಗೊಳಿಸುವರು.</verse>
				<verse number="19">“ದನಗಳಲ್ಲೂ ಆಡುಕುರಿಗಳಲ್ಲೂ ಚೊಚ್ಚಲಾದ ಗಂಡನ್ನು ನಿಮ್ಮ ದೇವರಾದ ಸರ್ವೇಶ್ವರನಿಗಾಗಿ ಪ್ರತಿಷ್ಠಿಸಬೇಕು. ಚೊಚ್ಚಲಾದ ಹೋರಿಯಿಂದ ಕೆಲಸಮಾಡಿಸಬಾರದು; ಚೊಚ್ಚಲಾದ ಕುರಿಯ ಉಣ್ಣೆಯನ್ನು ಕತ್ತರಿಸಬಾರದು.</verse>
				<verse number="20">ಪ್ರತಿ ವರ್ಷ ನೀವೂ ನಿಮ್ಮ ಮನೆಯವರೂ ಅವುಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲೆ, ಅವರ ಸನ್ನಿಧಿಯಲ್ಲೇ ಕೊಯ್ದು ತಿನ್ನಬೇಕು.</verse>
				<verse number="21">“ಅದು ಕುಂಟಾಗಿ, ಕುರುಡಾಗಿ, ಇಲ್ಲವೆ ಬೇರೆ ವಿಧದಲ್ಲಿ ದೋಷವುಳ್ಳದ್ದಾಗಿದ್ದರೆ ಅದನ್ನು ನಿಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯಾಗಿ ಸಮರ್ಪಿಸಕೂಡದು;</verse>
				<verse number="22">ಅದನ್ನು ನಿಮ್ಮ ಊರಲ್ಲೇ ತಿನ್ನಬೇಕು. ಶುದ್ಧರೂ ಅಶುದ್ಧರೂ ಜಿಂಕೆದುಪ್ಪಿಗಳ ಮಾಂಸವನ್ನು ತಿನ್ನುವ ಪ್ರಕಾರ ಇವುಗಳನ್ನೂ ತಿನ್ನಬಹುದು.</verse>
				<verse number="23">ನೀವು ರಕ್ತವನ್ನು ಮಾತ್ರ ಭುಜಿಸಬಾರದು; ಅದನ್ನು ನೀರಿನಂತೆ ಭೂಮಿಯ ಮೇಲೆ ಸುರಿದುಬಿಡಬೇಕು.</verse>
			</chapter>
			<chapter number="16">
				<verse number="1">“ನೀವು ಚೈತ್ರಮಾಸದಲ್ಲಿ ಪಾಸ್ಕಹಬ್ಬವನ್ನು ನಿಮ್ಮ ದೇವರಾದ ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಆ ಮಾಸದಲ್ಲೇ ರಾತ್ರಿವೇಳೆಯಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಈಜಿಪ್ಟ್ ದೇಶದಿಂದ ಬಿಡುಗಡೆ ಮಾಡಿದ್ದು.</verse>
				<verse number="2">ಆಡುಕುರಿಗಳಲ್ಲಾಗಲಿ, ದನಗಳಲ್ಲಿ ಆಗಲಿ ಪಾಸ್ಕದ ಪಶುವನ್ನು, ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲೇ ಅವರಿಗಾಗಿ ನೀವು ಅದನ್ನು ವಧಿಸಬೇಕು.</verse>
				<verse number="3">ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಏಕೆಂದರೆ ನೀವು ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ ಅವಸರದಿಂದ ಈಜಿಪ್ಟನ್ನು ಬಿಟ್ಟುಬಂದಿರಿ. ಈಜಿಪ್ಟ್ ದೇಶದಿಂದ ನಿಮಗೆ ಬಿಡುಗಡೆಯಾದ ದಿನವು ನಿಮ್ಮ ಜೀವಮಾನವೆಲ್ಲಾ ನೆನಪಿನಲ್ಲಿರುವಂತೆ, ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ನೀವು ಏಳು ದಿವಸಗಳವರೆಗೂ ತಿನ್ನಬೇಕು.</verse>
				<verse number="4">ಆ ಏಳು ದಿವಸವೂ ನಿಮ್ಮ ನಾಡಿನಲ್ಲೆಲ್ಲಾ ಹುಳಿಬೆರೆತ ಯಾವ ಪದಾರ್ಥವೂ ನಿಮ್ಮ ಬಳಿ ಇರಬಾರದು. ಮೊದಲನೆಯ ದಿನದ ಸಂಜೆಯಲ್ಲಿ ನೀವು ವಧಿಸಿದ ಪಶುಮಾಂಸದಲ್ಲಿ ಸ್ವಲ್ಪವನ್ನಾದರೂ ಮರುದಿನದವರೆಗೆ ಉಳಿಸಬಾರದು.</verse>
				<verse number="5">“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ಯಾವ ಊರಲ್ಲೂ, ಪಾಸ್ಕದಪಶುವನ್ನು ವಧಿಸಬಾರದು;</verse>
				<verse number="6">ಅವರು ತಮ್ಮ ನ್ಯಾಯಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ಈಜಿಪ್ಟ್ ದೇಶದಿಂದ ಹೊರಟುಬಂದ ಕಾಲವಾದ ಸೂರ್ಯಾಸ್ತಮಾನಕಾಲದಲ್ಲಿ, ಅದನ್ನು ವಧಿಸಬೇಕು.</verse>
				<verse number="7">ಆ ಸ್ಥಳದಲ್ಲೇ ನೀವು ಅದನ್ನು ಅಡಿಗೆಮಾಡಿ ತಿನ್ನಬೇಕು. ಮರುದಿವಸ ನಿಮ್ಮ ನಿಮ್ಮ ಮನೆಗಳಿಗೆ ನೀವು ಹೊರಟುಹೋಗಬಹುದು.</verse>
				<verse number="8">ಆರು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನ ನಿಮ್ಮ ದೇವರಾದ ಸರ್ವೇಶ್ವರನ ಗೌರವಾರ್ಥ ಸಭೆಸೇರಬೇಕು. ಆ ದಿನದಲ್ಲಿ ಯಾವ ದುಡಿಮೆಯನ್ನೂ ಮಾಡಕೂಡದು.</verse>
				<verse number="9">“ಬೆಳೆ ಕೊಯ್ಯವುದಕ್ಕೆ ಕುಡುಗೋಲು ಹಾಕುವ ಕಾಲ ಮೊದಲ್ಗೊಂಡು ಏಳು ವಾರಗಳನ್ನು ಎಣಿಸಿ,</verse>
				<verse number="10">ಆ ಏಳು ವಾರಗಳಾದನಂತರ, ಪಂಚಾಶತ್ತಮ ದಿನದ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅನುಗ್ರಹಿಸಿದ ಬೆಳೆಗೆ ತಕ್ಕಷ್ಟು ಕಾಣಿಕೆಯನ್ನು ನೀವು ಆಗ ಅವರಿಗಾಗಿ ತರಬೇಕು.</verse>
				<verse number="11">ಮತ್ತು ಅವರು ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಗಂಡುಹೆಣ್ಣು ಆಳುಗಳು, ನಿಮ್ಮ ಊರಲ್ಲಿರುವ ಲೇವಿಯರು, ಪರದೇಶದವರು, ತಾಯಿತಂದೆಯಿಲ್ಲದವರು ಹಾಗು ವಿಧವೆಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.</verse>
				<verse number="12">ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಆಚರಿಸಬೇಕು.</verse>
				<verse number="13">“ನೀವು ಕಣದ ಕೆಲಸವನ್ನೂ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ, ಏಳು ದಿನಗಳವರೆಗೂ ಪರ್ಣಕುಠೀರಗಳ ಜಾತ್ರೆಯನ್ನು ಆಚರಿಸಬೇಕು.</verse>
				<verse number="14">ಅದರಲ್ಲಿ ನೀವೂ ನಿಮ್ಮ ಗಂಡುಹೆಣ್ಣು ಮಕ್ಕಳೂ ಗಂಡುಹೆಣ್ಣು ಆಳುಗಳೂ ನಿಮ್ಮ ಊರಲ್ಲಿರುವ ಲೇವಿಯರೂ ಪರದೇಶದವರೂ ತಾಯಿತಂದೆಯಿಲ್ಲದವರೂ ಹಾಗು ವಿಧವೆಯರೂ ಸಂಭ್ರಮದಿಂದಿರಬೇಕು.</verse>
				<verse number="15">ನಿಮ್ಮ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಏಳು ದಿನವೂ ಆ ಜಾತ್ರೆಯನ್ನು ಆಚರಿಸಬೇಕು. ನಿಮ್ಮ ವ್ಯವಸಾಯವನ್ನೂ ಬೇರೆ ಎಲ್ಲಾ ಕೆಲಸಗಳನ್ನೂ ಅವರು ಸಫಲಗೊಳಿಸಿದ್ದರಿಂದ ನೀವು ಬಹಳ ಆನಂದದಿಂದಿರಬೇಕು.</verse>
				<verse number="16">“ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯಲ್ಲಿ, ಪಂಚಾಶತ್ತಮ ದಿನದ ಜಾತ್ರೆಯಲ್ಲಿ, ಕುಟೀರಗಳ ಜಾತ್ರೆಯಲ್ಲಿ, ಹೀಗೆ ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅವರು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಒಬ್ಬರೂ ಅವರ ಸನ್ನಿಧಿಗೆ ಬರಕೂಡದು.</verse>
				<verse number="17">ಪ್ರತಿಯೊಬ್ಬನು ತನಗೆ ಸರ್ವೇಶ್ವರ ಅನುಗ್ರಹಿಸಿದ ಆದಾಯದ ಮೇರೆಗೆ ತನ್ನ ಶಕ್ತಿಗೆ ಅನುಸಾರ ಕೊಡಬೇಕು.</verse>
				<verse number="18">“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರತಿಯೊಂದು ಕುಲಕ್ಕೆ ಕೊಡುವ ಎಲ್ಲ ಊರುಗಳಲ್ಲಿ ನ್ಯಾಯಾಧಿಪತಿಗಳನ್ನೂ ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅಂಥವರು ಜನರಿಗೆ ನ್ಯಾಯವನ್ನು ವಿಚಾರಿಸಿ, ಸರಿಯಾದ ತೀರ್ಪುಕೊಡಬೇಕು.</verse>
				<verse number="19">“ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು; ಪಕ್ಷಪಾತ ಕೂಡದು; ಲಂಚ ತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರನ್ನಾಗಿಸುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.</verse>
				<verse number="20">ನೀವು ನ್ಯಾಯವನ್ನು ಮಾತ್ರ ಅನುಸರಿಸಬೇಕು. ಹಾಗೆ ನಡೆದರೆ, ನಿಮ್ಮ ದೇವರಾದ ಸರ್ವೇಶ್ವರ ಕೊಡುವ ನಾಡನ್ನು ಸ್ವಾಧೀನಮಾಡಿಕೊಂಡು ಬಾಳುವಿರಿ.</verse>
				<verse number="21">“ನಿಮ್ಮ ದೇವರಾದ ಸರ್ವೇಶ್ವರನಿಗಾಗಿ ನೀವು ಕಟ್ಟಿಸಿಕೊಳ್ಳುವ ಬಲಿಪೀಠದ ಬಳಿ ಅಶೇರವೆಂಬ ವಿಗ್ರಹಸ್ತಂಭವನ್ನು, ಅದು ಯಾವ ವಿಧವಾದ ಮರದಿಂದ ಮಾಡಿರಲಿ, ಅದನ್ನು ನೆಡಬಾರದು.</verse>
				<verse number="22">ಕಲ್ಲಿನ ಕಂಬವನ್ನೂ ನಿಲ್ಲಿಸಬಾರದು; ಇದು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾದುದು.</verse>
			</chapter>
			<chapter number="17">
				<verse number="1">“ಯಾವುದಾದರೊಂದು ಕುಂದುಕೊರತೆಯಾಗಲಿ, ದುರ್ಲಕ್ಷಣವಾಗಲಿ ಇರುವ ದನಕುರಿಗಳನ್ನು ನಿಮ್ಮ ದೇವರಾದ ಸರ್ವೇಶ್ವರನಿಗೆ ಸಮರ್ಪಿಸಬಾರದು. ಅಂಥವುಗಳನ್ನು ಅವರು ಸಹಿಸರು.</verse>
				<verse number="2">“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ಊರುಗಳೊಂದರಲ್ಲಿ ಒಬ್ಬ ಪುರುಷ ಅಥವಾ ಸ್ತ್ರೀ ನಿಮ್ಮ ದೇವರಾದ ಸರ್ವೇಶ್ವರನ ನಿಬಂಧನೆಯನ್ನು ಮೀರಿದ್ದಾರೆ ಎಂದೂ,</verse>
				<verse number="3">ಅನ್ಯ ದೇವರುಗಳನ್ನಾಗಲಿ, ಪೂಜಿಸಬಾರದೆಂದು ನಿಷೇಧಿಸಿರುವ ಸೂರ್ಯಚಂದ್ರ ನಕ್ಷತ್ರಗಳನ್ನಾಗಲಿ, ಪೂಜಿಸಿ, ಆರಾಧಿಸಿ ಸರ್ವೇಶ್ವರನ ದೃಷ್ಟಿಯಲ್ಲಿ ದುಷ್ಟವಾದುದನ್ನು ನಡೆಸಿದ್ದಾರೆ ಎಂದೂ</verse>
				<verse number="4">ನಿಮಗೆ ತಿಳಿದರೆ ಅದನ್ನು ನೀವು ಸೂಕ್ಷ್ಮವಾಗಿ ವಿಚಾರಣೆ ಮಾಡಬೇಕು. ಆಗ ಇಸ್ರಯೇಲರಲ್ಲಿ ಯಾರಿಂದಲಾದರೂ ಆ ನಿಷಿದ್ಧಕಾರ್ಯ ನಡೆದದ್ದು ನಿಜವೆಂದು ತಿಳಿದುಬಂದರೆ,</verse>
				<verse number="5">ಆ ಪುರುಷನನ್ನು ಅಥವಾ ಆ ಸ್ತ್ರೀಯನ್ನು ಹಿಡಿದು, ಊರ ಹೊರಗೆ ತಂದು, ಕಲ್ಲುಬೀರಿ ಕೊಲ್ಲಬೇಕು.</verse>
				<verse number="6">ಒಬ್ಬನೇ ಒಬ್ಬ ಸಾಕ್ಷಿಯ ಮಾತಿನ ಮೇಲೆ ಯಾರಿಗೂ ಮರಣಶಿಕ್ಷೆಯಾಗಬಾರದು; ಮರಣಶಿಕ್ಷೆಯನ್ನು ವಿಧಿಸುವುದಕ್ಕೆ ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.</verse>
				<verse number="7">ಅಪರಾಧಿಯನ್ನು ಕೊಲ್ಲುವುದಕ್ಕೆ ಸಾಕ್ಷಿಗಳೇ ಮೊದಲು ಕಲ್ಲನ್ನು ಎಸೆಯಬೇಕು. ತರುವಾಯ ಜನರೆಲ್ಲರೂ ಹಾಕಲಿ. ಹೀಗೆಮಾಡಿ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.</verse>
				<verse number="8">“ವಿಧವಿಧವಾದ ಜೀವಹತ್ಯ, ಹಕ್ಕುಬಾಧ್ಯತೆ, ಹೊಡೆದಾಟ ಇವುಗಳ ವಿಷಯದಲ್ಲಿ ಅನುಮಾನ, ಚರ್ಚೆಗಳು ನಿಮ್ಮ ಊರಲ್ಲಿ ಉಂಟಾಗಬಹುದು. ಆಗ ಸರಿಯಾಗಿ ವಿವೇಚಿಸುವುದು ನಿಮ್ಮ ಶಕ್ತಿಗೆ ಮೀರಿದ ಪಕ್ಷಕ್ಕೆ ನೀವು ಊರಿನಿಂದ ಹೊರಟು ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ</verse>
				<verse number="9">ಯಾಜಕಸೇವೆಮಾಡುವ ಲೇವಿಯರ ಮತ್ತು ಆ ಕಾಲದ ನ್ಯಾಯಾಧಿಪತಿಯ ಬಳಿಗೆ ಹೋಗಿ ವಿಚಾರಿಸಬೇಕು. ನೀವು ಕೊಡಬೇಕಾದ ತೀರ್ಪನ್ನು ಅವರು ತಿಳಿಸುವರು.</verse>
				<verse number="10">ಸರ್ವೇಶ್ವರ ಆರಿಸಿಕೊಂಡ ಆ ಸ್ಥಳದಲ್ಲಿ ಅವರು ನಿಮಗೆ ತಿಳಿಸುವ ಮಾತಿನ ಪ್ರಕಾರ ನೀವು ಮಾಡಬೇಕು. ಅವರು ಬೋಧಿಸುವುದನ್ನೇ ನೀವು ಅನುಸರಿಸಬೇಕು.</verse>
				<verse number="11">ಅವರು ಕೊಡುವ ಆದೇಶದ ಪ್ರಕಾರ ಹಾಗು ಅವರು ಹೇಳಿಕೊಡುವ ತೀರ್ಪಿನಂತೆ ನೀವು ಮಾಡಬೇಕು; ಅವರು ತಿಳಿಸುವ ಮಾತನ್ನು ಬಿಟ್ಟು ಎಡಬಲಕ್ಕೆ ತಿರುಗಬಾರದು.</verse>
				<verse number="12">ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸೇವೆಮಾಡುವ ಯಾಜಕರ ಅಥವಾ ನ್ಯಾಯಾಧಿಪತಿಯ ಮಾತನ್ನು ಯಾವನು ಅಹಂಕಾರದಿಂದ ನಿರಾಕರಿಸುತ್ತಾನೋ ಅವನಿಗೆ ಮರಣಶಿಕ್ಷೆ ಆಗಬೇಕು. ಹೀಗೆ ಮಾಡಿ ನೀವು ಆ ದುಷ್ಟತ್ವವನ್ನು ಇಸ್ರಯೇಲರ ಮಧ್ಯದಿಂದ ತೆಗೆದುಹಾಕಬೇಕು.</verse>
				<verse number="13">ಜನರೆಲ್ಲರು ಇದನ್ನು ಕೇಳಿ, ಭಯಪಟ್ಟು, ಇನ್ನು ಅಹಂಕಾರದಿಂದ ನಡೆಯರು.</verse>
				<verse number="14">“ನಿಮ್ಮ ದೇವರಾದ ಸರ್ವೇಶ್ವರ, ನಿಮಗೆ ಕೊಡುವ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು, ಅದರಲ್ಲಿ ವಾಸವಾಗಿರುವಾಗ ‘ಸುತ್ತಲಿರುವ ಎಲ್ಲ ಜನಾಂಗಗಳಂತೆ ನಾವೂ ಒಬ್ಬ ಅರಸನನ್ನು ನೇಮಿಸಿಕೊಳ್ಳೋಣ’ ಎಂದು ಹೇಳಿಕೊಳ್ಳಬಹುದು.</verse>
				<verse number="15">ಆಗ ನೀವು ಅಗತ್ಯವಾಗಿ ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಂಡವನನ್ನೇ ನೇಮಿಸಿಕೊಳ್ಳಬೇಕು. ನಿಮ್ಮ ಬಂಧುಗಳಾದ ಸ್ವಜನರಲ್ಲೇ ಒಬ್ಬನನ್ನು ಅರಸನನ್ನಾಗಿ ನೇಮಿಸಿಕೊಳ್ಳಬೇಕೆ ಹೊರತು ಅನ್ಯದೇಶದವನನ್ನು ನೇಮಿಸಬಾರದು.</verse>
				<verse number="16">“ಅವನು ಕುದುರೆಯ ದಂಡನ್ನು ಹೆಚ್ಚಿಸಿಕೊಳ್ಳಬಾರದು. ಕುದುರೆಗಳನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ತನ್ನ ಪ್ರಜೆಗಳನ್ನು ಈಜಿಪ್ಟ್ ದೇಶಕ್ಕೆ ಹೋಗಗೊಡಿಸಬಾರದು. ನೀವು ಇನ್ನು ಆ ದೇಶಕ್ಕೆ ಹೋಗಲೇಕೂಡದೆಂದು ಸರ್ವೇಶ್ವರ ಆಜ್ಞಾಪಿಸಿದ್ದಾರೆ.</verse>
				<verse number="17">ಅವನು ಅನೇಕ ಸ್ತ್ರೀಯರನ್ನು ಮದುವೆಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಸರ್ವೇಶ್ವರನಿಗೆ ವಿಮುಖವಾಗಲು ಅವಕಾಶವಾಗುವುದು. ಅವನು ಬೆಳ್ಳಿಬಂಗಾರವನ್ನು ವಿಶೇಷವಾಗಿ ಗಳಿಸಿಕೊಳ್ಳಬಾರದು.</verse>
				<verse number="18">“ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿ ಇರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗಾಗಿ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು.</verse>
				<verse number="19">ಅವನು ಗರ್ವದಿಂದ ತನ್ನ ಸ್ವದೇಶದವರನ್ನು ಹೀಯಾಳಿಸಬಾರದು; ಸರ್ವೇಶ್ವರನ ಆಜ್ಞೆಯನ್ನು ಮೀರಿ ಎಡಬಲಕ್ಕೆ ತಿರುಗಿಕೊಳ್ಳಬಾರದು; ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಾಗಿರಬೇಕು; ಈ ಧರ್ಮಶಾಸ್ತ್ರದ ಎಲ್ಲ ವಾಕ್ಯಗಳನ್ನೂ ವಿಧಿಗಳನ್ನೂ ಅನುಸರಿಸಲು ಅಭ್ಯಾಸಮಾಡಿಕೊಳ್ಳಬೇಕು; ಈ ಕಾರಣ ಈ ಗ್ರಂಥ ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನವೆಲ್ಲಾ ಇದನ್ನು ಓದಿಕೊಳ್ಳುತ್ತಾ ಇರಬೇಕು.</verse>
				<verse number="20">ಹೀಗೆ ಮಾಡಿದರೆ ಅವನೂ ಅವನ ಸಂತತಿಯವರೂ ದೀರ್ಘಕಾಲ ಇಸ್ರಯೇಲರ ಮೇಲೆ ರಾಜ್ಯಾಧಿಕಾರ ನಡೆಸುವರು.</verse>
			</chapter>
			<chapter number="18">
				<verse number="1">“ಯಾಜಕಸೇವೆ ಮಾಡುವ ಲೇವಿಯರಿಗೆ ಹಾಗು ಲೇವಿಯಕುಲದ ಸರ್ವರಿಗೆ ಇತರ ಇಸ್ರಯೇಲರಂತೆ ಸ್ವಂತಕ್ಕಾಗಿ ಭೂಸ್ವತ್ತು ದೊರೆಯುವುದಿಲ್ಲ. ಸರ್ವೇಶ್ವರನಿಗೆ ಸಮರ್ಪಿತವಾದ ಬಲಿದ್ರವ್ಯಗಳು ಹಾಗು ಎಲ್ಲ ಮೀಸಲಾಗಿಟ್ಟವುಗಳೇ ಅವರಿಗೆ ಜೀವನಾಧಾರ.</verse>
				<verse number="2">ಸ್ವದೇಶದವರಿಗೆ ದೊರಕುವಂತೆ ಅವರಿಗೆ ಸೊತ್ತು ದೊರಕುವುದಿಲ್ಲ. ಸರ್ವೇಶ್ವರ ಸ್ವಾಮಿಯೇ ಲೇವಿಯರ ಸೊತ್ತು. ಇದನ್ನು ಸ್ವಾಮಿಯೇ ಅವರಿಗೆ ಹೇಳಿದ್ದಾರೆ.</verse>
				<verse number="3">“ಜನರಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ: ದನಕರುಗಳನ್ನು ಹಾಗು ಆಡುಕುರಿಗಳನ್ನು ಕೊಯ್ದು ಬಲಿದಾನ ಮಾಡುವವರೆಲ್ಲರು ಆ ಪಶುಗಳ ಮುಂದೊಡೆಯನ್ನೂ ಎರಡು ದವಡೆಗಳನ್ನೂ ಕೋಷ್ಠವನ್ನೂ ಯಾಜಕರಿಗೆ ಕೊಡಬೇಕು.</verse>
				<verse number="4">ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳ ಪ್ರಥಮಫಲಗಳನ್ನು ಹಾಗು ಮೊದಲನೆಯ ಸಾರಿ ಕತ್ತರಿಸುವ ಕುರಿಗಳ ಉಣ್ಣೆಯನ್ನು ಅವರಿಗೆ ಕೊಡಬೇಕು.</verse>
				<verse number="5">ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಕುಲಗಳಲ್ಲಿ ಲೇವಿಯನನ್ನು, ಇವನ ತರುವಾಯ ಇವನ ಸಂತತಿಯವರನ್ನು, ತಮ್ಮ ಸನ್ನಿಧಿಯಲ್ಲಿ ಶಾಶ್ವತವಾಗಿ ಸೇವೆಮಾಡುವುದಕ್ಕೆ ತಾವೇ ನೇಮಿಸಿಕೊಂಡು ಇದ್ದಾರಲ್ಲವೆ?</verse>
				<verse number="6">“ಇಸ್ರಯೇಲರ ಯಾವುದಾದರೊಂದು ಊರಲ್ಲಿ ಇಳಿದುಕೊಂಡಿದ್ದ ಒಬ್ಬ ಲೇವಿಯನು ಸ್ವಂತ ಮನಸ್ಸಿನಿಂದ ಆ ಊರನ್ನು ಬಿಟ್ಟು ಸರ್ವೇಶ್ವರ ಆರಿಸಿಕೊಂಡ ಸ್ಥಳಕ್ಕೆ ಬರಬಹುದು.</verse>
				<verse number="7">ಅಲ್ಲೇ ಸರ್ವೇಶ್ವರನ ಸನ್ನಿಧಿಯಲ್ಲಿ ಸೇವೆಮಾಡುವ ತನ್ನ ಸ್ವಕುಲದವರಂತೆ ತನ್ನ ದೇವರಾದ ಸರ್ವೇಶ್ವರನ ಹೆಸರನ್ನು ಹೇಳಿ ತಾನೂ ಸೇವೆ ನಡೆಸಬಹುದು;</verse>
				<verse number="8">ಅಂಥವನ ಕೈಯಲ್ಲಿ ಪಿತ್ರಾರ್ಜಿತ ಸೊತ್ತನ್ನು ಮಾರಿದ ಹಣವಿದ್ದರೂ ಮಿಕ್ಕ ಲೇವಿಯರೊಂದಿಗೆ ಸಮವಾದ ಪಾಲಿಗೆ ಬಾಧ್ಯನಾಗಿರುವನು.</verse>
				<verse number="9">“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಖಂಡನೀಯ ಆಚಾರಗಳನ್ನು ಅನುಸರಿಸಲೇಬಾರದು.</verse>
				<verse number="10">ಮಕ್ಕಳನ್ನು ಆಹುತಿಕೊಡುವವರು, ಕಣಿಹೇಳುವವರು, ಶಕುನ ನೋಡುವವರು, ಯಂತ್ರಮಂತ್ರಗಳನ್ನು ಮಾಡುವವರು,</verse>
				<verse number="11">ಮಾಟಗಾರರು, ತಂತ್ರಗಾರರು, ಸತ್ತವರನ್ನು ವಿಚಾರಿಸುವವರು, ಬೇತಾಳಿಕರು, ಪ್ರೇತಸಿದ್ಧರು ಇಂಥವರು ಯಾರೂ ನಿಮ್ಮಲ್ಲಿ ಇರಬಾರದು.</verse>
				<verse number="12">ಇಂಥ ಕೆಲಸಗಳನ್ನು ನಡೆಸುವವರು ಸರ್ವೇಶ್ವರನಿಗೆ ಅಸಹ್ಯರಾಗಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ದೂರ ಹೊರದೂಡಿಸಿಬಿಡುತ್ತಾರೆ.</verse>
				<verse number="13">ನೀವು ನಿಮ್ಮ ದೇವರಾದ ಸರ್ವೇಶ್ವರನ ಸೇವೆಯ ವಿಷಯದಲ್ಲಿ ಸದಾಚಾರವುಳ್ಳವರು ಆಗಿರಬೇಕು.</verse>
				<verse number="14">ನೀವು ಸ್ವಾಧೀನಮಾಡಿಕೊಳ್ಳುವ ಆ ನಾಡಿನ ಜನಾಂಗಗಳು ಶಕುನಗಳನ್ನು ನೋಡುತ್ತಾರೆ, ಯಂತ್ರಮಂತ್ರಗಳನ್ನು ಮಾಡುತ್ತಾರೆ. ನೀವಾದರೋ ಹಾಗೆ ಮಾಡುವುದಕ್ಕೆ ನಿಮ್ಮ ದೇವರಾದ ಸರ್ವೇಶ್ವರನ ಅನುಮತಿ ಇಲ್ಲ.</verse>
				<verse number="15">“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಹೋದರರಲ್ಲಿ, ನನ್ನಂಥ ಒಬ್ಬ ಪ್ರವಾದಿಯನ್ನು ನಿಮಗೆ ಏರ್ಪಡಿಸುವರು. ಅವನಿಗೆ ಮಾತ್ರ ಕಿವಿಗೊಡಬೇಕು.</verse>
				<verse number="16">ಹೋರೇಬಿನಲ್ಲಿ ನೀವು ಸಭೆಕೂಡಿದ ದಿನದಂದು ಇದನ್ನೇ ನೀವು ಕೋರಿಕೊಂಡಿರಿ; ‘ನಮ್ಮ ದೇವರಾದ ಸರ್ವೇಶ್ವರನ ಸ್ವರವನ್ನು ಇನ್ನು ಕೇಳಲು ಹಾಗು ಈ ಘೋರವಾದ ಅಗ್ನಿಜ್ವಾಲೆಯನ್ನು ಇನ್ನು ನೋಡಲು ನಮಗೆ ಮನಸ್ಸಿಲ್ಲ; ಹಾಗೇನಾದರು ಕೇಳಿ, ನೋಡಿದರೆ ಸತ್ತೇವು’ ಎಂದು ನೀವು ಹೇಳಿದಿರಿ.</verse>
				<verse number="17">ಆಗ ಸರ್ವೇಶ್ವರ ನನಗೆ, ‘ಇವರು ಹೇಳಿದ್ದು ಸರಿಯಾಗಿದೆ;</verse>
				<verse number="18">ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೆ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.</verse>
				<verse number="19">ಅವನು ನನ್ನ ಹೆಸರಿನಲ್ಲಿ ಹೇಳಿದ ಮಾತುಗಳಿಗೆ ಯಾರು ಕಿವಿಕೊಡುವುದಿಲ್ಲವೋ ಅಂಥವರನ್ನು ನಾನು ಶಿಕ್ಷಿಸುವೆನು.</verse>
				<verse number="20">ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರ ಹೊಂದದೆ ನಾನು ಪ್ರೇರಣೆಮಾಡದ ಮಾತುಗಳನ್ನು ಸರ್ವೇಶ್ವರನ ಮಾತೆಂದು ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತಾಡುವನೋ, ಅವನಿಗೆ ಮರಣಶಿಕ್ಷೆಯಾಗಬೇಕು,’ ಎಂದು ಹೇಳಿದರು.</verse>
				<verse number="21">“ಪ್ರವಾದಿ ಹೇಳಿದ ಮಾತು ಸರ್ವೇಶ್ವರನ ಮಾತಲ್ಲವೆಂದು ತಿಳಿದುಕೊಳ್ಳುವುದು ಹೇಗೆ ಎಂದುಕೊಳ್ಳುತ್ತೀರೋ?</verse>
				<verse number="22">ಪ್ರವಾದಿ ಸರ್ವೇಶ್ವರನ ಮಾತೆಂದು ಹೇಳಿ, ಮುಂತಿಳಿಸಿದ ಸಂಗತಿ ನಡೆಯದೆ ಹೋದರೆ, ಅವನ ಮಾತು ಸರ್ವೇಶ್ವರನದಲ್ಲವೆಂದು ನೀವು ತಿಳಿದುಕೊಳ್ಳಬೇಕು. ಅವನು ಅಧಿಕಾರವಿಲ್ಲದೆ ಮಾತಾಡಿದವನು; ಅವನಿಗೆ ಹೆದರಬಾರದು.</verse>
			</chapter>
			<chapter number="19">
				<verse number="1">“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡಿನಲ್ಲಿರುವ ಜನಾಂಗಗಳನ್ನು ಅಲ್ಲಿಂದ ತೆಗೆದುಹಾಕಿಬಿಡುವರು. ತರುವಾಯ ನೀವು ಆ ನಾಡನ್ನು ಸ್ವಾಧೀನಕ್ಕೆ ತೆಗೆದುಕೊಳ್ಳುವಿರಿ.</verse>
				<verse number="2">ಅವರ ಗ್ರಾಮಗಳಲ್ಲೂ ಮನೆಗಳಲ್ಲೂ ವಾಸವಾಗಿರುವಾಗ ಆ ನಿಮ್ಮ ನಾಡಿನ ಮಧ್ಯೆ ನೀವು ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕು.</verse>
				<verse number="3">ನರಹತ್ಯಮಾಡಿದವರು ಆ ಪಟ್ಟಣಗಳಿಗೆ ಓಡಿಹೋಗುವುದಕ್ಕೆ ಅನುಕೂಲವಾಗುವಂತೆ ನೀವು ಅವುಗಳ ದಾರಿಯನ್ನು ಸರಿಪಡಿಸಬೇಕು. ಮತ್ತು ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ಆ ನಾಡನ್ನು ಮೂರು ಭಾಗಮಾಡಬೇಕು.</verse>
				<verse number="4">“ಆ ಆಶ್ರಯನಗರಗಳ ವಿವರ ಹೀಗಿದೆ: ಯಾವನಾದರು ದ್ವೇಷವಿಲ್ಲದೆ, ಕೈತಪ್ಪಿ, ಮತ್ತೊಬ್ಬನನ್ನು ಕೊಂದರೆ, ಅವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.</verse>
				<verse number="5">ಉದಾಹರಣೆಗೆ, ಒಬ್ಬ ವ್ಯಕ್ತಿ ಕಟ್ಟಿಗೆಯನ್ನು ಕಡಿಯಲು ಮತ್ತೊಬ್ಬನ ಜೊತೆಯಲ್ಲಿ ಅಡವಿಗೆ ಹೋದನೆಂದು ಇಟ್ಟುಕೊಳ್ಳೋಣ. ಅಲ್ಲಿ ಒಂದು ಮರವನ್ನು ಕೊಡಲಿಯಿಂದ ಹೊಡೆಯುತ್ತಿರುವಾಗ ಕೊಡಲಿ ಕಾವಿನಿಂದ ಜಾರಿ ಆ ಮತ್ತೊಬ್ಬನಿಗೆ ತಗಲಿ ಅವನು ಸತ್ತರೆ, ಹೊಡೆದವನು ಆ ನಗರಗಳಲ್ಲಿ ಒಂದಕ್ಕೆ ಓಡಿಹೋಗಿ ಬದುಕಿಕೊಳ್ಳಬಹುದು.</verse>
				<verse number="6">ಸತ್ತವನಲ್ಲಿ ಅವನಿಗೆ ಮೊದಲಿನಿಂದಲೂ ದ್ವೇಷವಿರಲಿಲ್ಲ; ಆದುದರಿಂದ ಅವನು ಮರಣಶಿಕ್ಷೆಗೆ ಪಾತ್ರನಲ್ಲ; ಆದರೂ ಹತ್ಯ ಮಾಡಿದವನಿಗೆ ಮುಯ್ಯಿ ತೀರಿಸುವ ಹಂಗುಳ್ಳ ಸಮೀಪಬಂಧು ಕೋಪದಿಂದ ಕೆಂಡ ಕಾರುತ್ತಾ ಅವನನ್ನು ಹಿಂದಟ್ಟಬಹುದು. ಮಾರ್ಗ ಮಧ್ಯದಲ್ಲೇ ಅವನನ್ನು ಹಿಡಿದು ಕೊಂದುಹಾಕಬಹುದು.</verse>
				<verse number="7">ಈ ಕಾರಣದಿಂದಲೇ ನೀವು ಆ ಮೂರು ಆಶ್ರಯ ನಗರಗಳನ್ನು ಗೊತ್ತುಮಾಡಬೇಕೆಂದು ಆಜ್ಞಾಪಿಸಿ ಇದ್ದೇನೆ.</verse>
				<verse number="8">“ನಾನು ಈಗ ನಿಮಗೆ ಬೋಧಿಸುವ ಈ ಇಡೀ ಧರ್ಮೋಪದೇಶವನ್ನು ನೀವು ಅನುಸರಿಸಬೇಕು. ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರು ಹೇಳುವ ಮಾರ್ಗದಲ್ಲೇ ಯಾವಾಗಲು ನಡೆಯಬೇಕು. ಆಗ ಅವರು ನಿಮ್ಮ ಪಿತೃಗಳಿಗೆ ವಾಗ್ದಾನಮಾಡಿದಂತೆ ನಿಮ್ಮ ರಾಜ್ಯವನ್ನು ವಿಸ್ತರಿಸಿ, ನಿಮ್ಮ ಪಿತೃಗಳಿಗೆ ಸೂಚಿಸಿದ ಪ್ರದೇಶವನ್ನೆಲ್ಲಾ ಕೊಡುವರು. ಆಗ ಈ ಮೂರು ನಗರಗಳಲ್ಲದೆ ಇನ್ನೂ ಮೂರು ನಗರಗಳನ್ನು ಗೊತ್ತುಮಾಡಬೇಕು.</verse>
				<verse number="9"></verse>
				<verse number="10">ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿರಪರಾಧಿಗೆ ಮರಣ ಶಿಕ್ಷೆಯಾಗಬಾರದು; ಅಂಥವನಿಗೆ ಮರಣಶಿಕ್ಷೆ ಆದರೆ ಆ ರಕ್ತದೋಷ ನಿಮ್ಮದಾಗಿಯೇ ಇರುವುದು.</verse>
				<verse number="11">“ಆದರೆ ಒಬ್ಬನು ಇನ್ನೊಬ್ಬನಲ್ಲಿ ದ್ವೇಷವನ್ನೇ ಸಾಧಿಸಿ, ಸಮಯನೋಡಿ ಅವನ ಮೇಲೆ ಬಿದ್ದು, ಅವನನ್ನು ಹೊಡೆದು ಕೊಂದು ತರುವಾಯ ಈ ನಗರಗಳಲ್ಲೊಂದಕ್ಕೆ ಓಡಿಹೋಗಬಹುದು. ಆಗ</verse>
				<verse number="12">ಆ ಊರಿನ ಹಿರಿಯರು ಅವನನ್ನು ಅಲ್ಲಿಂದ ಹಿಡಿದು ತರಿಸಿ ಅವನಿಗೆ ಮರಣಶಿಕ್ಷೆಯಾಗುವಂತೆ ಮುಯ್ಯಿತೀರಿಸುವ ಹಂಗುಳ್ಳವನ ಕೈಗೆ ಕೊಡಬೇಕು.</verse>
				<verse number="13">ನೀವು ಅವನನ್ನು ಕನಿಕರಿಸಬಾರದು. ನಿಮಗೆ ಶುಭವುಂಟಾಗುವಂತೆ ನಿರಪರಾಧಿಯ ಪ್ರಾಣವನ್ನು ತೆಗೆದವನು ಇಸ್ರಯೇಲರಲ್ಲಿ ಉಳಿಯದಂತೆ ಮಾಡಬೇಕು.</verse>
				<verse number="14">“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿಮ್ಮ ಪಾಲಿಗೆ ಬಂದ ಸೊತ್ತಿನಲ್ಲಿ ನೆರೆಯವನ ಭೂಮಿಯ ಪೂರ್ವಕಾಲದ ಗಡಿಕಲ್ಲನ್ನು ಒತ್ತರಿಸಬಾರದು.</verse>
				<verse number="15">“ಯಾವ ದೋಷದ ಅಥವಾ ಅಪರಾಧದ ನಿಷಯದಲ್ಲೂ ಒಬ್ಬನೇ ಒಬ್ಬನ ಸಾಕ್ಷಿಯನ್ನು ನೀವು ಅಂಗೀಕರಿಸಬಾರದು. ನಡೆದ ಘಟನೆ ರುಜುವಾತಾಗಲು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳು ಬೇಕು.</verse>
				<verse number="16">“ಯಾವನಾದರು ನ್ಯಾಯವಿರುದ್ಧವಾಗಿ ಬಂದು ಮತ್ತೊಬ್ಬನನ್ನು ಅಪರಾಧಿ ಎಂದು ಸಾಕ್ಷಿ ಹೇಳಿದರೆ,</verse>
				<verse number="17">ವ್ಯಾಜ್ಯವಾಡುವ ಆ ಇಬ್ಬರೂ ಸರ್ವೇಶ್ವರನ ಸನ್ನಿಧಿಯಲ್ಲಿ, ಯಾಜಕರ ಮುಂದೆ ಹಾಗು ಆಗ ಇರುವ ನ್ಯಾಯಾಧಿಪತಿಗಳ ಮುಂದೆ ನಿಲ್ಲಬೇಕು.</verse>
				<verse number="18">ನ್ಯಾಯಾಧಿಪತಿಗಳು ಚೆನ್ನಾಗಿ ವಿಚಾರಣೆಮಾಡಿದ ಮೇಲೆ ಆ ವ್ಯಕ್ತಿಯ ಸಾಕ್ಷಿ ಸುಳ್ಳೆಂದು ತೋರಿಬಂದರೆ,</verse>
				<verse number="19">ಅವನು ಆ ಮತ್ತೊಬ್ಬನಿಗೆ ಮಾಡಿಸಬೇಕೆಂದಿದ್ದ ಶಿಕ್ಷೆಯನ್ನು ಅವನಿಗೇ ವಿಧಿಸಬೇಕು. ಹೀಗೆ, ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.</verse>
				<verse number="20">ಉಳಿದವರು ಆ ಸಂಗತಿಯನ್ನು ಕೇಳಿ ಭಯಪಟ್ಟು, ಇನ್ನು ಮುಂದೆ ಇಂಥ ದುಷ್ಟತ್ವವನ್ನು ನಡೆಸರು.</verse>
				<verse number="21">ನೀವು ಅಂಥವರನ್ನು ಕನಿಕರಿಸಬಾರದು; ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು, ಕಣ್ಣಿಗೆ ಪ್ರತಿಯಾಗಿ ಕಣ್ನನ್ನು, ಹಲ್ಲಿಗೆ ಪ್ರತಿಯಾಗಿ ಹಲ್ಲನ್ನು, ಕೈಗೆ ಪ್ರತಿಯಾಗಿ ಕೈಯನ್ನು, ಕಾಲಿಗೆ ಪ್ರತಿಯಾಗಿ ಕಾಲನ್ನು ಅವನಿಂದ ತೆಗೆದುಬಿಡಬೇಕು.</verse>
			</chapter>
			<chapter number="20">
				<verse number="1">“ನೀವು ಶತ್ರುಗಳ ವಿರುದ್ಧ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳು, ರಥಗಳು ಹಾಗು ನಿಮಗಿಂತ ಹೆಚ್ಚಾದ ಕಾಲ್ಬಲವು ಇರುವುದನ್ನು ಕಂಡರೆ, ಹೆದರಬೇಡಿ. ಏಕೆಂದರೆ ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದಾರೆ.</verse>
				<verse number="2">“ಕಾಳಗ ಸಮೀಪಿಸಿದಾಗ ಯಾಜಕನು ಮುಂದೆ ಬಂದು ಯೋಧರಿಗೆ, ‘ಇಸ್ರಯೇಲರೇ, ಕೇಳಿ; ನೀವು ಈಗ ಶತ್ರುಗಳೊಡನೆ ಯುದ್ಧಮಾಡುವ ಕಾಲ ಸಮೀಪಿಸಿದೆ; ನೀವು ಎದೆಗೆಡಬಾರದು, ದಿಗಿಲುಪಡಬಾರದು, ನಡುಗಬಾರದು, ಶತ್ರುಗಳಿಗೆ ಭಯಪಡಬಾರದು.</verse>
				<verse number="3"></verse>
				<verse number="4">ನಿಮ್ಮ ದೇವರಾದ ಸರ್ವೇಶ್ವರನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮ್ಮ ಪರವಾಗಿ ಯುದ್ಧಮಾಡಿ, ನಿಮಗೆ ಜಯವನ್ನುಂಟುಮಾಡುವರು’ ಎಂದು ಹೇಳಬೇಕು</verse>
				<verse number="5">“ಮತ್ತು ಸೇನಾಧಿಪತಿಗಳು ಅವರಿಗೆ, ‘ನಿಮ್ಮಲ್ಲಿ ಯಾವನಾದರು ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನು ಗೃಹಪ್ರವೇಶಮಾಡದಿದ್ದರೆ, ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶ ಮಾಡಿಕೊಂಡಾನು.</verse>
				<verse number="6">ಯಾವನಾದರು ದ್ರಾಕ್ಷೀತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ, ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಾನು.</verse>
				<verse number="7">ಯಾವನಾದರೂ ತಾನು ಮದುವೆಮಾಡಿಕೊಂಡ ಹೆಣ್ಣನ್ನು ಇನ್ನು ಸೇರಿಸಿಕೊಳ್ಳದಿದ್ದರೆ, ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಅವಳನ್ನು ಸೇರಿಸಿಕೊಂಡಾನು,’ ಎಂದು ಹೇಳಬೇಕು.</verse>
				<verse number="8">ಮತ್ತು ‘ಯಾವನಾದರೂ ಧೈರ್ಯ ಕಡಿಮೆಯಾಗಿ ಅಂಜಿಕೊಂಡರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು’, ಎಂದು ಹೇಳಬೇಕು.</verse>
				<verse number="9">ಸೇನಾಪತಿಗಳು ಯೋಧರಿಗೆ ಈ ರೀತಿ ಹೇಳಿದ ನಂತರ ದಂಡಿನವರ ಮೇಲೆ ನಾಯಕರನ್ನು ನೇಮಿಸಬೇಕು.</verse>
				<verse number="10">“ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳಲು ಅದರ ಹತ್ತಿರಕ್ಕೆ ಬಂದಾಗ, ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಶರಣಾಗಬಹುದೆಂದು ಪ್ರಕಟಿಸಬೇಕು.</verse>
				<verse number="11">ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀ ಕೆಲಸವನ್ನು ಮಾಡುವ ಗುಲಾಮರಾಗಬೇಕು.</verse>
				<verse number="12">ಅವರು ನಿಮ್ಮ ಮಾತಿಗೆ ಸಮ್ಮತಿಸದೆ, ಪ್ರತಿಭಟಿಸಿದರೆ ಆಗ ನೀವು ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು.</verse>
				<verse number="13">ನಿಮ್ಮ ದೇವರಾದ ಸರ್ವೇಶ್ವರ ಆ ಪಟ್ಟಣವನ್ನು ನಿಮಗೆ ವಶಪಡಿಸಿದಾಗ ಅದರಲ್ಲಿರುವ ಗಂಡಸರೆಲ್ಲರನ್ನೂ ಕನಿಕರಿಸದೆ ಸಂಹಾರ ಮಾಡಬೇಕು.</verse>
				<verse number="14">ಹೆಂಗಸರನ್ನೂ ಮಕ್ಕಳನ್ನೂ ದನಗಳನ್ನೂ ಊರಲ್ಲಿರುವ ಆಸ್ತಿಯನ್ನೂ ನೀವು ಸ್ವಂತಕ್ಕೆ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ವಶಪಡಿಸಿದ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.</verse>
				<verse number="15">ಈ ನಾಡಿನ ಜನಾಂಗಗಳಿಗೆ ಸೇರದ ಹಾಗು ದೂರದ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ನೀವು ಹಾಗೆಯೆ ನಡೆದುಕೊಳ್ಳಬೇಕು.</verse>
				<verse number="16">ಆದರೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.</verse>
				<verse number="17">ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ, ಹಿತ್ತಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು ಇವರೆಲ್ಲರನ್ನೂ ವಿನಾಶ ಶಾಪಗ್ರಸ್ತರನ್ನಾಗಿ ಮಾಡಿಬಿಡಬೇಕು.</verse>
				<verse number="18">ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧಾಚಾರಗಳನ್ನು ನಿಮಗೆ ಕಲಿಸಿಕೊಡಬಹುದು; ಮತ್ತು ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ದ್ರೋಹಿಗಳಾಗಬಹುದು.</verse>
				<verse number="19">“ನೀವು ಒಂದು ಪಟ್ಟಣವನ್ನು ಸ್ವಾಧೀನ ಮಾಡಿಕೊಳ್ಳಲು ಅದಕ್ಕೆ ಬಹುದಿವಸ ಮುತ್ತಿಗೆ ಹಾಕಬೇಕಾಗಬಹುದು; ಅದಕ್ಕೆ ಸೇರಿದ ಮರಗಳನ್ನು ಹಾಳುಮಾಡಬಾರದು; ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಶತ್ರುಗಳೇನು? ಅವುಗಳೊಡನೆ ಯುದ್ಧಮಾಡಬಹುದೇ?</verse>
				<verse number="20">ತಿನ್ನತಕ್ಕ ಹಣ್ಣು ಕೊಡುವುದಿಲ್ಲ ಎಂದು ನೀವು ತಿಳಿದ ಮರಗಳನ್ನು ಮಾತ್ರ ಕಡಿದು ಹಾಳುಮಾಡಬಹುದು. ಅವುಗಳಿಂದ ಯುದ್ಧ ಯಂತ್ರಗಳನ್ನು ಮಾಡಿಕೊಂಡು ನಿಮಗೆ ವಿರುದ್ಧ ಆಗಿರುವ ಆ ಪಟ್ಟಣ ಬೀಳುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.</verse>
			</chapter>
			<chapter number="21">
				<verse number="1">“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ಹತನಾದ ಒಬ್ಬ ವ್ಯಕ್ತಿಯ ಶವವು ಅಡವಿಯಲ್ಲಿ ಬಿದ್ದಿರುವುದನ್ನು ನೀವು ಕಂಡಾಗ ಮತ್ತು ಅವನನ್ನು ಕೊಂದವನು ಯಾರೆಂಬುದು ತಿಳಿಯದೆಹೋದರೆ</verse>
				<verse number="2">ನಿಮ್ಮ ಹಿರಿಯರೂ ನ್ಯಾಯಾಧಿಪತಿಗಳೂ ಬಂದು ಹತನಾದವನ ಶವದ ಸುತ್ತಲಿರುವ ಊರುಗಳಲ್ಲಿ ಯಾವುದು ಹತ್ತಿರವೆಂದು ತಿಳಿದುಕೊಳ್ಳಲು ಅಳತೆಮಾಡಬೇಕು.</verse>
				<verse number="3">ಯಾವ ಊರು ಹತ್ತಿರವಾಗಿದೆಯೋ ಆ ಊರಿನ ಹಿರಿಯರು ಇನ್ನೂ ನೊಗಕ್ಕೆ ಕಟ್ಟದ ಹಾಗು ಯಾವ ಕೆಲಸವನ್ನೂ ಮಾಡದ ಒಂದು ಕಡಸನ್ನು ತೆಗೆದುಕೊಳ್ಳಬೇಕು;</verse>
				<verse number="4">ಎಂದಿಗೂ ವ್ಯವಸಾಯವಿಲ್ಲದಂಥ ನೀರು ಯಾವಾಗಲೂ ಹರಿಯುವಂಥ ತಗ್ಗಿಗೆ ಹೋಗಿ ಅಲ್ಲಿ ಅದರ ಕುತ್ತಿಗೆಯನ್ನು ಮುರಿದು ಕೊಲ್ಲಬೇಕು.</verse>
				<verse number="5">ಲೇವಿಕುಲದವರಾದ ಯಾಜಕರಲ್ಲಿ ಕೆಲವರು ಹತ್ತಿರ ಇರಬೇಕು. ನಿಮ್ಮ ದೇವರಾದ ಸರ್ವೇಶ್ವರ ಅವರನ್ನೇ ತಮ್ಮ ಸಾನ್ನಿಧ್ಯಸೇವೆಯನ್ನು ಮಾಡುವುದಕ್ಕೆ ಹಾಗು ತಮ್ಮ ಹೆಸರಿನಲ್ಲಿ ಜನರನ್ನು ಆಶೀರ್ವದಿಸುವುದಕ್ಕೆ ಆರಿಸಿಕೊಂಡಿದ್ದಾರಲ್ಲವೆ? ಸಂದೇಹಕರವಾದ ಎಲ್ಲ ವ್ಯಾಜ್ಯಗಳ ಮತ್ತು ಹೊಡೆದಾಟಗಳ ವಿಷಯದಲ್ಲಿ ಅವರೇ ತೀರ್ಮಾನಿಸಬೇಕು.</verse>
				<verse number="6">ಹತನಾದವನ ಶವಕ್ಕೆ ಹತ್ತಿರವಿರುವ ಗ್ರಾಮದ ಹಿರಿಯರು, ಆ ತಗ್ಗಿನಲ್ಲಿ ಕುತ್ತಿಗೆ ಮುರಿದ ಆ ಕಡಸಿನ ಮೇಲೆ ಕೈಗಳನ್ನು ತೊಳೆದುಕೊಳ್ಳಬೇಕು.</verse>
				<verse number="7">ಹಾಗೆ ಮಾಡುವಾಗ, ‘ನಮ್ಮ ಕೈಗಳು ಈ ಹತ್ಯವನ್ನು ಮಾಡಲಿಲ್ಲ; ನಮ್ಮ ಕಣ್ಣುಗಳು ನೋಡಲಿಲ್ಲ;</verse>
				<verse number="8">ಸರ್ವೇಶ್ವರಾ, ನೀವು ಬಿಡುಗಡೆ ಮಾಡಿದ ನಿಮ್ಮ ಜನರನ್ನು ಕ್ಷಮಿಸಬೇಕು; ಅನ್ಯಾಯ ಆದ ನರಹತ್ಯ ದೋಷಫಲವು ನಿಮ್ಮ ಜನರಾದ ಇಸ್ರಯೇಲರಿಗೆ ತಗಲದಿರಲಿ’ ಎಂದು ಹೇಳಬೇಕು.</verse>
				<verse number="9">ಆಗ ಆ ರಕ್ತಾಪರಾಧಕ್ಕೆ ಕ್ಷಮೆ ದೊರಕುವುದು. ಹೀಗೆ ಸರ್ವೇಶ್ವರನ ದೃಷ್ಟಿಯಲ್ಲಿ ಸರಿಯಾದುದನ್ನು ಮಾಡುವುದರಿಂದ ನೀವೇ ಅನ್ಯಾಯವಾದ ನರಹತ್ಯ ದೋಷವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕುವಿರಿ.</verse>
				<verse number="10">“ನೀವು ಶತ್ರುಗಳ ವಿರುದ್ಧ ಯುದ್ಧಮಾಡಿ ನಿಮ್ಮ ದೇವರಾದ ಸರ್ವೇಶ್ವರನ ಅನುಗ್ರಹದಿಂದ ಅವರನ್ನು ಸೋಲಿಸಿದಿರಿ ಎಂದು ಇಟ್ಟುಕೊಳ್ಳೋಣ.</verse>
				<verse number="11">ಆಗ ಹಿಡಿದ ಸೆರೆಯವರಲ್ಲಿ ಒಬ್ಬ ಸುಂದರ ಸ್ತ್ರೀಯನ್ನು ನಿಮ್ಮಲ್ಲಿ ಯಾರಾದರು ಕಂಡು ಮೋಹಿಸಿ ಮದುವೆಮಾಡಿಕೊಳ್ಳಬೇಕೆಂದು ಅಪೇಕ್ಷಿಸಿದರೆ, ಅವಳನ್ನು ಮನೆಗೆ ಕರೆದುಕೊಂಡು ಬರಲಿ;</verse>
				<verse number="12">ತರುವಾಯ ಅವಳು ತಲೆ ಕ್ಷೌರಮಾಡಿಸಿಕೊಂಡು, ಉಗುರುಗಳನ್ನು ತೆಗೆದುಕೊಂಡು, ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು</verse>
				<verse number="13">ಅವನ ಮನೆಯಲ್ಲಿ ಒಂದು ತಿಂಗಳವರೆಗೆ ತನ್ನ ತಾಯಿತಂದೆಗಳ ವಿಯೋಗದ ನಿಮಿತ್ತ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು.</verse>
				<verse number="14">ತರುವಾಯ ಅವಳು ಅವನಿಗೆ ಇಷ್ಟವಾಗದೆಹೋದರೆ ಅವನು ಅವಳನ್ನು ಅವಳು ಆಶಿಸುವಲ್ಲಿಗೆ ಕಳುಹಿಸಿಬಿಡಬೇಕು. ಅವಳನ್ನು ಕೂಡಿದ್ದರಿಂದ ಹಣಕ್ಕೆ ಮಾರಲೂಬಾರದು, ಊಳಿಗದವಳಂತೆ ನಡೆಸಲೂಬಾರದು.</verse>
				<verse number="15">“ಒಬ್ಬನಿಗೆ ಇಬ್ಬರು ಹೆಂಡತಿಯರಿದ್ದು ಅವರಲ್ಲಿ ಒಬ್ಬಳನ್ನು ಪ್ರೀತಿಸಿ ಮತ್ತೊಬ್ಬಳನ್ನು ತಿರಸ್ಕರಿಸುವ ಸಂದರ್ಭದಲ್ಲಿ ಅವರಿಬ್ಬರೂ ಅವನಿಂದ ಮಕ್ಕಳನ್ನು ಪಡೆದಿದ್ದರೆ, ಚೊಚ್ಚಲು ಮಗನು ತಿರಸ್ಕರಿಸಲ್ಪಟ್ಟವಳಲ್ಲಿಯೇ ಹುಟ್ಟಿದ್ದರೂ,</verse>
				<verse number="16">ತಂದೆ ತನ್ನ ಆಸ್ತಿಯನ್ನು ಮಕ್ಕಳಿಗೆ ಸೊತ್ತಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು, ಪ್ರೀತಿಯ ಹೆಂಡತಿಯ ಮಗನನ್ನೇ ಚೊಚ್ಚಲವನೆಂದು ಭಾವಿಸಕೂಡದು.</verse>
				<verse number="17">ತಿರಸ್ಕರಿಸಲ್ಪಟ್ಟವಳ ಮಗನೇ ಚೊಚ್ಚಲವನೆಂದು ಒಪ್ಪಿ, ಅವನಿಗೆ ಎರಡು ಭಾಗಗಳನ್ನು ಕೊಡಬೇಕು. ಅವನೇ ತಂದೆಯ ಪ್ರಥಮಫಲ, ಅವನೇ ಚೊಚ್ಚಲುತನದ ಹಕ್ಕಿಗೆ ಬಾಧ್ಯಸ್ತ.</verse>
				<verse number="18">“ಒಬ್ಬ ಮಗನು ತಂದೆತಾಯಿಗಳ ಆಜ್ಞೆಗೆ ಒಳಗಾಗದೆ, ಶಿಕ್ಷಿಸಿದ್ದರೂ ಮೊಂಡನೂ ಅವಿಧೇಯನೂ ಆಗಿ, ಅವರ ಮಾತನ್ನು ಕೇಳದೆಹೋದರೆ,</verse>
				<verse number="19">ತಂದೆತಾಯಿಗಳು ಅವನನ್ನು ಹಿಡಿದು ಊರಬಾಗಿಲಿಗೆ ಹಿರಿಯರ ಮುಂದೆ ತರಬೇಕು.</verse>
				<verse number="20">ಅಲ್ಲಿ ಅವರಿಗೆ, ‘ಈ ನಮ್ಮ ಮಗ ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ,ತುಂಟ’ ಎಂದು ಸಾಕ್ಷಿ ಹೇಳಬೇಕು.</verse>
				<verse number="21">ಅಗ ಊರಿನವರೆಲ್ಲರು ಅವನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದು ಹಾಕಿಬಿಡಬೇಕು. ಇಸ್ರಯೇಲರೆಲ್ಲರು ಕೇಳಿ ಭಯಪಡುವರು.</verse>
				<verse number="22">“ಮರಣಶಿಕ್ಷೆಗೆ ಪಾತ್ರನಾದ ಅಪರಾಧಿಯನ್ನು ಗಲ್ಲುಮರಕ್ಕೇರಿಸಿದ ಮೇಲೆ</verse>
				<verse number="23">ಅವನ ಶವವನ್ನು ನೀವು ರಾತ್ರಿಯೆಲ್ಲಾ ಆ ಮರದ ಮೇಲೆ ಇರಿಸಬಾರದು; ಅದನ್ನು ಅದೇ ದಿನ ನೆಲದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ಹೀಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡನ್ನು ನೀವೇ ಅಪವಿತ್ರಗೊಳಿಸಬಾರದು.</verse>
			</chapter>
			<chapter number="22">
				<verse number="1">“ಸ್ವದೇಶದವನ ಎತ್ತಾಗಲಿ, ಕುರಿ ಆಗಲಿ ದಾರಿತಪ್ಪಿಹೋಗಿರುವುದನ್ನು ನೀವು ಕಂಡರೆ, ಕಾಣದವರಂತೆ ಅದನ್ನು ಬಿಟ್ಟುಹೋಗಬಾರದು; ಅವನ ಬಳಿಗೆ ಅಟ್ಟಿಕೊಂಡು ಹೋಗಿ ಕೊಡಲೇಬೇಕು.</verse>
				<verse number="2">ಅವನು ನಿಮಗೆ ದೂರ ಆಗಿದ್ದರೆ, ಇಲ್ಲವೆ ಅವನು ಯಾರು ಎಂದು ನಿಮಗೆ ತಿಳಿಯದೆಹೋದರೆ, ಆ ಪ್ರಾಣಿಯನ್ನು ನಿಮ್ಮ ಮನೆಗೆ ಹೊಡೆದುಕೊಂಡು ಬಂದು ಕಾಯಬೇಕು; ಅವನು ಅದನ್ನು ಹುಡುಕುತ್ತಾ ಬಂದಾಗ, ನೀವು ಅದನ್ನು ಅವನಿಗೆ ಮರಳಿಕೊಡಬೇಕು.</verse>
				<verse number="3">ಅವನ ಕತ್ತೆಯಾಗಲಿ, ಬಟ್ಟೆಯಾಗಲಿ, ಅವನು ಕಳೆದುಕೊಂಡ ಯಾವ ವಸ್ತುವೇ ಆಗಲಿ ನಿಮಗೆ ಸಿಕ್ಕಿದರೆ ಹಾಗೆಯೇ ಮಾಡಬೇಕು; ಕಾಣದವರಂತೆ ಇರಲೇಬಾರದು.</verse>
				<verse number="4">“ಸ್ವದೇಶದವನ ಕತ್ತೆಯಾಗಲಿ, ಎತ್ತಾಗಲಿ ದಾರಿಯಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಕಾಣದವರಂತೆ ಹೋಗದೆ, ಅದನ್ನು ಎಬ್ಬಿಸಲು ಅವನಿಗೆ ಸಹಾಯಮಾಡಬೇಕು.</verse>
				<verse number="5">“ಹೆಂಗಸರು ಗಂಡಸರಂತೆ, ಗಂಡಸರು ಹೆಂಗಸರಂತೆ ಬಟ್ಟೆ ಹಾಕಬಾರದು; ಹಾಗೆ ಮಾಡುವವರು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯರು.</verse>
				<verse number="6">“ನೀವು ದಾರಿಯಲ್ಲಿ ಹೋಗುವಾಗ ಮರದ ಮೇಲಾಗಲಿ ನೆಲದ ಮೇಲಾಗಲಿ ಒಂದು ಹಕ್ಕಿಯ ಗೂಡನ್ನು ಕಂಡು ಅದರೊಳಗೆ ಮರಿಗಳು ಅಥವಾ ಮೊಟ್ಟೆಗಳು ಇದ್ದು ಅವುಗಳ ಮೇಲೆ ತಾಯಿ ಹೊದಗಿರುವುದನ್ನು ನೋಡಿದರೆ, ಮರಿಗಳನ್ನಾಗಲಿ ತಾಯಿಯನ್ನಾಗಲಿ ಹಿಡಿದುಕೊಳ್ಳಬಾರದು.</verse>
				<verse number="7">ನೀವು ಹೀಗೆ ನಡೆದುಕೊಂಡರೆ, ನಿಮಗೆ ಶ್ರೇಯಸ್ಸುಂಟಾಗುವುದು, ಮತ್ತು ಬಹುಕಾಲ ಬಾಳುವಿರಿ.</verse>
				<verse number="8">“ನೀವು ಹೊಸ ಮನೆಯನ್ನು ಕಟ್ಟಿಸಿಕೊಳ್ಳುವಾಗ ನಿಮ್ಮ ಮನೆಯ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಕೈಗೋಡೆಯನ್ನು ಕಟ್ಟಿಸಬೇಕು. ಇಲ್ಲದಿದ್ದರೆ ಒಬ್ಬನು ಆ ಮಾಳಿಗೆಯಿಂದ ಬಿದ್ದು, ಅವನ ಜೀವಹತ್ಯದೋಷ ನಿಮ್ಮ ಮನೆಯ ಮೇಲೆ ಬರುವುದು.</verse>
				<verse number="9">“ದ್ರಾಕ್ಷಿತೋಟಗಳಲ್ಲಿ ಬೇರೆ ವಿಧವಾದ ಬಿತ್ತನೆ ಮಾಡಬಾರದು; ಹಾಗೆ ಮಾಡಿದರೆ ಆ ಬೆಳೆಗೂ ಮತ್ತು ದ್ರಾಕ್ಷಿಬೆಳೆಗೂ ಹೀಗೆ ಆ ತೋಟದ ಬೆಳೆಗೂ ಗತಿಕೇಡಾಗುವುದು.</verse>
				<verse number="10">ಎತ್ತನ್ನೂ ಕತ್ತೆಯನ್ನೂ ಜೊತೆಮಾಡಿ ನೇಗಿಲಿಗೆ ಕಟ್ಟಬಾರದು.</verse>
				<verse number="11">ನಾರು ಮತ್ತು ಉಣ್ಣೆ ಎರಡೂ ಕೂಡಿಸುವ ಬಟ್ಟೆಯನ್ನು ಹಾಕಿಕೊಳ್ಳಬಾರದು.</verse>
				<verse number="12">“ನೀವು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಬೇಕು.</verse>
				<verse number="13">“ಒಬ್ಬನು ತಾನು ಮದುವೆಮಾಡಿಕೊಂಡ ಹೆಂಡತಿಯನ್ನು ದ್ವೇಷಿಸಿ</verse>
				<verse number="14">ಅವಳ ಬಗ್ಗೆ ಇಲ್ಲಸಲ್ಲದ ಮಾತುಗಳನ್ನು ಹೇಳಿ ‘ನಾನು ಇವಳನ್ನು ಮದುವೆಮಾಡಿಕೊಂಡೆ; ಆದರೆ ಕೂಡಿದಾಗ ಇವಳು ಕನ್ನಿಕೆಯಲ್ಲವೆಂದು ತಿಳಿದುಬಂತು’ ಎಂದು ಹೇಳಿ</verse>
				<verse number="15">ಅವಳ ಮೇಲೆ ಆಪಾದನೆ ತರಬಹುದು. ಅವಳ ತಾಯಿತಂದೆಗಳು ತಮ್ಮ ಮಗಳು ವಿವಾಹಕ್ಕೆ ಮುಂಚೆ ಪುರುಷ ಸಂಪರ್ಕ ಇಲ್ಲದವಳು ಎಂಬುದಕ್ಕೆ ಆಧಾರವನ್ನು ಊರಬಾಗಿಲಿಗೆ ಹಿರಿಯರ ಮುಂದೇ ತಂದು ತೋರಿಸಬೇಕು.</verse>
				<verse number="16">ತಂದೆ ಅವರಿಗೆ, ‘ನಾನು ನನ್ನ ಮಗಳನ್ನು ಈ ಪುರುಷನಿಗೆ ಮದುವೆಮಾಡಿಕೊಟ್ಟೆ; ಆಮೇಲೆ ಇವನು ಅವಳನ್ನು ದ್ವೇಷಿಸಿ</verse>
				<verse number="17">ಪರಪುರುಷ ಸಂಪರ್ಕಮಾಡಿದವಳೆಂದು ನಿರಾಧಾರವಾದ ಮಾತುಗಳನ್ನಾಡಿ ಅವಳನ್ನು ಅವಮಾನಪಡಿಸುತ್ತಾನೆ. ಇಗೋ, ನನ್ನ ಮಗಳು ವಿವಾಹಕ್ಕೆ ಮುಂಚೆ ಪುರುಷಸಂಪರ್ಕ ಮಾಡಿದವಳಲ್ಲ ಎಂಬುದಕ್ಕೆ ಇದೇ ಪ್ರಮಾಣ’ ಎಂದು ಹೇಳಿ ಅವಳ ಹಚ್ಚಡವನ್ನು ಹಿರಿಯರ ಮುಂದೆ ಇಡಬೇಕು.</verse>
				<verse number="18">ಇಸ್ರಯೇಲಳಾದ ಮಹಿಳೆಯ ಬಗ್ಗೆ ಆ ವ್ಯಕ್ತಿ ನಿರಾಧಾರವಾದ ತಪ್ಪು ಹೊರಿಸಿದ್ದರಿಂದ</verse>
				<verse number="19">ಆ ಊರಿನ ಹಿರಿಯರು ಅವನನ್ನು ಹಿಡಿಸಿ, ನೂರು ಬೆಳ್ಳಿ ನಾಣ್ಯದ ದಂಡವನ್ನು ವಿಧಿಸಿ, ಆ ಹಣವನ್ನು ಅವಳ ತಂದೆಗೆ ಕೊಡಿಸಬೇಕು; ಮತ್ತು ಅವನು ಆ ಮಹಿಳೆಯನ್ನು ಹೆಂಡತಿಯನ್ನಾಗಿಯೇ ಇಟ್ಟುಕೊಳ್ಳಬೇಕು; ಅವನ ಜೀವಮಾನಕಾಲವೆಲ್ಲಾ ಅವಳನ್ನು ಪರಿತ್ಯಾಗಮಾಡುವುದಕ್ಕೆ ಅವನಿಗೆ ಅಧಿಕಾರ ಇರುವುದಿಲ್ಲ.</verse>
				<verse number="20">“ಆದರೆ ಆ ಮಹಿಳೆ ವಿವಾಹಕ್ಕೆ ಮುಂಚೆ ಪುರುಷಸಂಪರ್ಕ ಮಾಡಿದವಳೇ ಎಂದು ತಿಳಿದುಬಂದರೆ</verse>
				<verse number="21">ಅವಳು ತಂದೆಯ ಮನೆಯಲ್ಲೇ ಸೂಳೆತನಮಾಡಿ ಇಸ್ರಯೇಲರಲ್ಲಿ ದುರಾಚಾರವನ್ನು ನಡೆಸಿದ್ದರಿಂದ ಅವಳನ್ನು ತಂದೆಯ ಮನೆಯ ಬಾಗಿಲಿಗೆ ಬರಮಾಡಬೇಕು; ಊರಿನವರೆಲ್ಲರು ಕಲ್ಲೆಸೆದು ಅವಳನ್ನು ಕೊಲ್ಲಬೇಕು. ಹೀಗೆ ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.</verse>
				<verse number="22">“ಒಬ್ಬನು ಪರನ ಹೆಂಡತಿಯೊಡನೆ ವ್ಯಭಿಚಾರ ಮಾಡಿ ಸಿಕ್ಕಿಬಿದ್ದರೆ ಆ ಸ್ತ್ರೀಪುರುಷ ಇಬ್ಬರಿಗೂ ಮರಣಶಿಕ್ಷೆಯಾಗಬೇಕು. ಹೀಗೆ ನೀವು ಇಂಥ ಕೇಡನ್ನು ಇಸ್ರಯೇಲರಿಂದ ತೆಗೆದುಹಾಕಬೇಕು.</verse>
				<verse number="23">“ಒಬ್ಬನಿಗೆ ನಿಶ್ಚಿತಳಾದ ಹೆಣ್ಣನ್ನು ಯಾವನಾದರು, ಊರೊಳಗೆ ಮರುಳುಗೊಳಿಸಿ, ಸಂಗಮಿಸಿದರೆ,</verse>
				<verse number="24">ನೀವು ಅವರಿಬ್ಬರನ್ನೂ ಊರ ಬಾಗಿಲಿನ ಹೊರಕ್ಕೆ ತರಿಸಿ ಕಲ್ಲೆಸೆದು ಕೊಲ್ಲಬೇಕು. ಒಬ್ಬನಿಗೆ ನಿಶ್ಚಿತಳಾದ ಸ್ತ್ರೀಯನ್ನು ಕೆಡಿಸಿದ್ದರಿಂದ ಆ ಪುರುಷನಿಗೂ ಊರಲ್ಲಿದ್ದು ಕೂಗಿಕೊಳ್ಳದೆಹೋದುದರಿಂದ ಆ ಮಹಿಳೆಗೂ ಮರಣಶಿಕ್ಷೆ ಆಗಬೇಕು. ಹೀಗೆ ನೀವು ಇಂಥ ಕೇಡನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಬೇಕು.</verse>
				<verse number="25">“ಆದರೆ ಆ ವ್ಯಕ್ತಿ ನಿಶ್ಚಿತಳಾದ ಆ ಮಹಿಳೆಯನ್ನು ಅಡವಿಯಲ್ಲಿ ಬಲಾತ್ಕಾರದಿಂದ ಸಂಗಮಿಸಿದ್ದರೆ ಆ ವ್ಯಕ್ತಿಗೆ ಮಾತ್ರ ಮರಣಶಿಕ್ಷೆ ಆಗಬೇಕು.</verse>
				<verse number="26">ಆ ಮಹಿಳೆಗೆ ಯಾವ ಶಿಕ್ಷೆಯೂ ಆಗಬಾರದು. ಅವಳಲ್ಲಿ ಮರಣಶಿಕ್ಷೆಗೆ ಪಾತ್ರ ಆದ ಅಪರಾಧವೇನೂ ಇಲ್ಲ. ಒಬ್ಬ ವ್ಯಕ್ತಿ ಮತ್ತೊಬ್ಬನ ಮೇಲೆ ಬಿದ್ದು ಕೊಲ್ಲುವುದು ಹೇಗೋ ಹಾಗೆಯೇ ಇದು ಕೂಡ;</verse>
				<verse number="27">ಆ ಮಹಿಳೆ ಅಡವಿಯಲ್ಲೇ ಅವನ ಕೈಗೆ ಸಿಕ್ಕಿದ್ದರಿಂದ ಅವಳು ಕೂಡಿಕೊಂಡಿದ್ದರೂ ತಪ್ಪಿಸುವವರು ಇರಲಿಲ್ಲ.</verse>
				<verse number="28">“ಯಾರಿಗೂ ನಿಶ್ಚಯವಾಗದೆ ಇರುವ ಕನ್ಯೆಯೊಡನೆ ಒಬ್ಬನು ಬಲಾತ್ಕಾರ ಸಂಭೋಗಮಾಡಿ ಸಿಕ್ಕಿಬಿದ್ದರೆ</verse>
				<verse number="29">ಅವನು ಅವಳನ್ನು ಮಾನಭಂಗಪಡಿಸಿದ್ದರಿಂದ ಅವಳ ತಂದೆಗೆ ಐವತ್ತು ಬೆಳ್ಳಿನಾಣ್ಯ ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು. ಅವನು ಬದುಕುವ ತನಕ ಅವಳನ್ನು ಪರಿತ್ಯಾಗ ಮಾಡುವುದಕ್ಕೆ ಅವನಿಗೆ ಅಧಿಕಾರವಿರುವುದಿಲ್ಲ.</verse>
				<verse number="30">“ತಂದೆಗೆ ಹೆಂಡತಿಯಾದವಳನ್ನು ಸಂಗಮಿಸಲೇಬಾರದು; ಅದು ತಂದೆಗೆ ಅಪಮಾನಪಡಿಸಿದ ಹಾಗಾಗುವುದು.</verse>
			</chapter>
			<chapter number="23">
				<verse number="1">“ಬೀಜಹೊಡಿಸಿಕೊಂಡಾಗಲಿ, ಜನನ ಇಂದ್ರಿಯ ಕತ್ತರಿಸಿಕೊಂಡಾಗಲಿ ನಪುಂಸಕರಾದವರು ಸರ್ವೇಶ್ವರನ ಸಭೆಯಲ್ಲಿ ಸೇರಬಾರದು.</verse>
				<verse number="2">ಅಗಮ್ಯಾಗಮನದಿಂದುಂಟಾದ ಸಂತತಿಯವರು ಹತ್ತನೆಯ ತಲೆಯವರಾದರೂ ಸರ್ವೇಶ್ವರನ ಸಭೆಗೆ ಸೇರಬಾರದು.</verse>
				<verse number="3">“ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ಸರ್ವೇಶ್ವರನ ಸಭೆಗೆ ಎಂದೆಂದಿಗೂ ಸೇರಬಾರದು. ಅವರ ಸಂತತಿಯವರು ಹತ್ತನೆಯ ತಲೆಯವರಾದರೂ ಸರ್ವೇಶ್ವರನ ಸಭೆಗೆ ಸೇರಬಾರದು.</verse>
				<verse number="4">ಏಕೆಂದರೆ ನೀವು ಈಜಿಪ್ಟ್ ದೇಶದಿಂದ ಬಂದಾಗ ಅವರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರೂರಿನಿಂದ ಅವನನ್ನು ಕರೆಸಿದರು.</verse>
				<verse number="5">ಆದರೂ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿದ್ದರಿಂದ ಬಿಳಾಮನ ಮಾತಿಗೆ ಸಮ್ಮತಿಸದೆ, ಅವನಿಂದ ಶಾಪವನ್ನು ನುಡಿಸದೆ, ಆಶೀರ್ವಾದವನ್ನೇ ಹೇಳಿಸಿದರು.</verse>
				<verse number="6">ನಿಮ್ಮ ಜೀವಮಾನಕಾಲವನ್ನೆಲ್ಲಾ ಅವರ ಯೋಗಕ್ಷೇಮವನ್ನು ಬಯಸಲೇಬಾರದು.</verse>
				<verse number="7">“ಎದೋಮ್ಯರನ್ನು ಸಂಪೂರ್ಣವಾಗಿ ನಿಷೇಧಿಸಬಾರದು; ಅವರು ನಿಮ್ಮ ಬಂಧುಜನಗಳು. ಈಜಿಪ್ಟರನ್ನೂ ಸಂಪೂರ್ಣವಾಗಿ ನಿಷೇಧಿಸಬಾರದು; ಅವರ ದೇಶದಲ್ಲಿ ನೀವು ಪ್ರವಾಸಿಗಳಾಗಿದ್ದಿರಲ್ಲವೆ?</verse>
				<verse number="8">ಅವರ ಸಂತತಿಯವರಲ್ಲಿ ಮೂರನೆಯ ತಲೆಯವರು ಸರ್ವೇಶ್ವರನ ಸಭೆಗೆ ಸೇರಬಹುದು.</verse>
				<verse number="9">“ನೀವು ಶತ್ರುಗಳ ವಿರುದ್ಧ ಯುದ್ಧಕ್ಕೆ ಹೊರಟು ಪಾಳೆಯದಲ್ಲಿರುವಾಗ ಯಾವ ಅಶುಚಿಯೂ ಆಗದಂತೆ ಎಚ್ಚರಿಕೆಯಿಂದಿರಬೇಕು.</verse>
				<verse number="10">ರಾತ್ರಿಕಾಲದಲ್ಲಿ ವೀರ್ಯಸ್ಖಲನದಿಂದ ಯಾವನಾದರು ಅಶುದ್ಧನಾದರೆ ಅವನು ಪಾಳೆಯದೊಳಗೆ ಇರದೆ ಹೊರಗೆ ಇರಬೇಕು.</verse>
				<verse number="11">ಅವನು ಸಂಜೆವೇಳೆಯಲ್ಲಿ ಸ್ನಾನಮಾಡಿ ಸೂರ್ಯನು ಮುಳುಗಿದ ಮೇಲೆ ಪಾಳೆಯದೊಳಗೆ ಬರಬಹುದು.</verse>
				<verse number="12">“ಪಾಳೆಯದ ಹೊರಗೆ ಪಾಯಖಾನೆಗಾಗಿ ಒಂದು ಸ್ಥಳವನ್ನು ಗೊತ್ತುಮಾಡಬೇಕು.</verse>
				<verse number="13">ಯುದ್ಧದ ಸಾಮಾನುಗಳಲ್ಲದೆ ಸಲಕೆ ನಿಮ್ಮ ಬಳಿಯಲ್ಲೇ ಇರಬೇಕು; ನೀವು ಬಹಿರ್ದೆಶೆಗೆ ಹೋದಾಗ ಆ ಸಲಕೆಯಿಂದ ಅಗೆದು ಕಲ್ಮಷವನ್ನು ಮುಚ್ಚಿಬಿಡಬೇಕು.</verse>
				<verse number="14">ನಿಮ್ಮ ದೇವರಾದ ಸರ್ವೇಶ್ವರಾ ನಿಮ್ಮನ್ನು ಕಾಪಾಡಲು, ಶತ್ರುಗಳನ್ನು ನಿಮ್ಮ ಕೈವಶಮಾಡಲು ನಿಮ್ಮ ಪಾಳೆಯದೊಳಗೆ ಸಂಚಾರಮಾಡುತ್ತಾರೆ; ನಿಮ್ಮಲ್ಲಿ ಅಶುಚಿಯೇನಾದರೂ ಕಂಡುಬಂದರೆ ಅವರು ನಿಮ್ಮನ್ನು ಬಿಟ್ಟುಹೋಗದಂತೆ ಪಾಳೆಯವು ನಿರ್ಮಲವಾಗಿರಬೇಕು.</verse>
				<verse number="15">“ತಪ್ಪಿಸಿಕೊಂಡ ಒಬ್ಬ ಗುಲಾಮನು ನಿಮ್ಮಲ್ಲಿ ಇರುವುದಕ್ಕೆ ಬಂದರೆ ಅವನನ್ನು ಅವನ ದಣಿಗೆ ಮತ್ತೆ ವಶಪಡಿಸಬಾರದು.</verse>
				<verse number="16">ನಿಮ್ಮ ಊರುಗಳಲ್ಲಿ ಯಾವ ಸ್ಥಳವು ಅವನಿಗೆ ಇಷ್ಟವಾಗಿದೆಯೋ ಅಲ್ಲೇ ಅವನು ವಾಸವಾಗಿರಬಹುದು; ಅವನನ್ನು ನೀವು ಶೋಷಣೆಗೆ ಗುರಿಪಡಿಸಬಾರದು.</verse>
				<verse number="17">“ಇಸ್ರಯೇಲರಲ್ಲಿ ಯಾವ ಸ್ತ್ರೀಯೂ ಗುಡಿವೇಶ್ಯೆಯಾಗಬಾರದು; ಅಂತೆಯೇ ಯಾವ ಪುರುಷನೂ ಅಂಥ ವೇಶ್ಯೆತನಕ್ಕೆ ಇಳಿಯಬಾರದು.</verse>
				<verse number="18">ಸೂಳೆತನದಿಂದಾಗಲಿ ಜಾರತ್ವದಿಂದಾಗಲಿ ಸಂಪಾದಿಸಿದ ಹಣವನ್ನು ಹರಕೆಯಾಗಿ ನಿಮ್ಮ ದೇವರಾದ ಸರ್ವೇಶ್ವರನ ಮಂದಿರದೊಳಗೆ ತರಲೇಬಾರದು; ಈ ಎರಡೂ ಅವರಿಗೆ ಅಸಹ್ಯವಾದುವು.</verse>
				<verse number="19">“ಹಣವನ್ನಾಗಲಿ, ಆಹಾರಪದಾರ್ಥಗಳನ್ನಾಗಲಿ, ಬೇರೆ ಯಾವುದನ್ನೇ ಆಗಲಿ</verse>
				<verse number="20">ಪರದೇಶದವನಿಗೆ ಬಡ್ಡಿಗೆ ಕೊಡಬಹುದೇ ಹೊರತು ಸ್ವದೇಶದವನಿಗೆ ಕೊಡಬಾರದು. ಹೀಗೆ ನಡೆದರೆ ನೀವು ಸ್ವದೇಶವಾಗಿ ಪಡೆಯಲಿರುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಎಲ್ಲ ಪ್ರಯತ್ನಗಳನ್ನು ಕೈಗೂಡಿಸಿ ಅಭಿವೃದ್ಧಿಪಡಿಸುವರು.</verse>
				<verse number="21">“ನಿಮ್ಮ ದೇವರಾದ ಸರ್ವೇಶ್ವರನಿಗೆ ಹರಕೆಮಾಡಿದ ಮೇಲೆ ಅದನ್ನು ತಡಮಾಡದೆ ತೀರಿಸಬೇಕು; ಅವರು ತಪ್ಪದೆ ಅದನ್ನು ವಿಚಾರಿಸುವರು; ತೀರಿಸದೆ ಹೋಗುವುದು ಪಾಪ.</verse>
				<verse number="22">ನೀವು ಹರಕೆಮಾಡದಿದ್ದರೆ ದೋಷವೇನೂ ಇಲ್ಲ.</verse>
				<verse number="23">ಆದರೆ ಬಾಯಿಂದ ನುಡಿದದ್ದನ್ನು ನೆರವೇರಿಸಲೇಬೇಕು. ನಿಮ್ಮ ದೇವರಾದ ಸರ್ವೇಶ್ವರನಿಗೆ ಬಾಯಿಂದ ಹರಕೆಮಾಡಿಕೊಂಡಂತೆಯೇ ಅದನ್ನು ಒಪ್ಪಿಸಿಬಿಡಬೇಕು.</verse>
				<verse number="24">“ಮತ್ತೊಬ್ಬನ ದ್ರಾಕ್ಷಿತೋಟದಲ್ಲಿ ನೀವು ಹಾದುಹೋಗುವಾಗ ಇಷ್ಟಾನುಸಾರ ಹಣ್ಣುಗಳನ್ನು ತಿನ್ನಬಹುದು. ಆದರೆ ಬುಟ್ಟಿಯಲ್ಲಿ ಹಾಕಿಕೊಂಡು ಹೋಗಬಾರದು.</verse>
				<verse number="25">ಮತ್ತೊಬ್ಬನ ಬೆಳೆಯ ನಡುವೆ ಹಾದುಹೋಗುವಾಗ ತೆನೆಗಳನ್ನು ಕೈಯಿಂದ ಮುರಿದುಕೊಳ್ಳಬಹುದು; ಆದರೆ ಆ ಬೆಳೆಗೆ ಕುಡುಗೋಲು ಹಾಕಬಾರದು.</verse>
			</chapter>
			<chapter number="24">
				<verse number="1">“ಒಬ್ಬನು ತಾನು ಮದುವೆಮಾಡಿಕೊಂಡ ಮಹಿಳೆಯಲ್ಲಿ ಏನೋ ಅವಲಕ್ಷಣವನ್ನು ಕಂಡು, ಅವಳಲ್ಲಿ ಸಂತೋಷಪಡದೆ, ತ್ಯಾಗಪತ್ರವನ್ನು ಬರೆದುಕೊಟ್ಟು ಅವಳನ್ನು ಮನೆಯಿಂದ ಕಳುಹಿಸಿಬಿಟ್ಟನೆಂದು ಇಟ್ಟುಕೊಳ್ಳೋಣ.</verse>
				<verse number="2">ಅವಳು ಮತ್ತೊಬ್ಬನನ್ನು ಮದುವೆ ಆಗಿ ಅವನಿಂದಲೂ ತಿರಸ್ಕರಿಸಲ್ಪಟ್ಟು ತ್ಯಾಗಪತ್ರವನ್ನು ಹೊಂದಿ ಕಳುಹಿಸಲ್ಪಟ್ಟರೆ ಅಥವಾ ಈ ಎರಡನೆಯ ಗಂಡನು ಸತ್ತುಹೋದರೆ,</verse>
				<verse number="3"></verse>
				<verse number="4">ಅವಳನ್ನು ಕಳುಹಿಸಿಬಿಟ್ಟ ಮೊದಲನೆಯ ಗಂಡ ಅವಳನ್ನು ಪುನಃ ಪರಿಗ್ರಹಿಸಬಾರದು; ಅವಳು ಅಶುದ್ಧಳಾದವಳು; ಅವಳನ್ನು ಪುನಃ ಪರಿಗ್ರಹಿಸುವುದು ಸರ್ವೇಶ್ವರನಿಗೆ ಹೇಯಕಾರ್ಯ. ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿಗೆ ದೋಷವುಂಟಾಗಲು ಅವಕಾಶಕೊಡಬೇಡಿ.</verse>
				<verse number="5">“ಹೊಸದಾಗಿ ಮದುವೆಮಾಡಿಕೊಂಡವನು ಸೈನ್ಯದವರೊಡನೆ ಯುದ್ಧಕ್ಕೆ ಹೋಗಬಾರದು; ಭಾರವಾದ ಯಾವ ಕೆಲಸವನ್ನು ಅವನಿಗೆ ನೇಮಿಸಬಾರದು. ಅವನು ಒಂದು ವರ್ಷದವರೆಗೆ ಬಿಡುವಾಗಿ ಮನೆಯಲ್ಲಿ ಇದ್ದುಕೊಂಡು, ಪರಿಗ್ರಹಿಸಿದ ಹೆಂಡತಿಯೊಡನೆ ಸುಖವಾಗಿರಲಿ.</verse>
				<verse number="6">“ಬೀಸುವ ಕಲ್ಲನ್ನು ಪೂರ್ತಿಯಾಗಲಿ, ಅರ್ಧವಾಗಲಿ ಒತ್ತೆ ತೆಗೆದುಕೊಳ್ಳಬಾರದು; ಅದು ಜೀವನಾಧಾರವನ್ನೇ ಒತ್ತೆಯಾಗಿ ತೆಗೆದುಕೊಂಡ ಹಾಗಾಗುವುದು.</verse>
				<verse number="7">“ಒಬ್ಬನು ಸ್ವದೇಶದವನಾದ ಇಸ್ರಯೇಲನನ್ನು ಕದ್ದು ಅವನನ್ನು ಗುಲಾಮನಾಗಿ ನಡೆಸಿಕೊಂಡದ್ದು ಅಥವಾ ಮಾರಿಬಿಟ್ಟದ್ದು ತಿಳಿದುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಿಬಿಡಬೇಕು.</verse>
				<verse number="8">“ಕುಷ್ಟರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವುದಕ್ಕೆ ನೀವು ಜಾಗರೂಕರಾಗಿರಬೇಕು; ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.</verse>
				<verse number="9">ನೀವು ಈಜಿಪ್ಟ್ ದೇಶದಿಂದ ಬಂದಾಗ ದಾರಿಯಲ್ಲಿ ನಿಮ್ಮ ದೇವರಾದ ಸರ್ವೇಶ್ವರ ಮಿರ್ಯಾಮಳಿಗೆ ಮಾಡಿದ್ದನ್ನು ನೆನಪಿಗೆ ತಂದುಕೊಳ್ಳಿ.</verse>
				<verse number="10">“ಮತ್ತೊಬ್ಬನಿಗೆ ಸಾಲಕೊಡುವಾಗ ಒತ್ತೆಯನ್ನು ತೆಗೆದುಕೊಳ್ಳುವುದಕ್ಕೆ ಅವನ ಮನೆ ಒಳಕ್ಕೆ ಹೋಗದೆ ಹೊರಗೆ ಇರಬೇಕು.</verse>
				<verse number="11">ಸಾಲ ತೆಗೆದುಕೊಂಡವನೇ ಒತ್ತೆಯ ಸಾಮಾನನ್ನು ತಂದುಕೊಡಬೇಕು.</verse>
				<verse number="12">ಅವನು ಕೇವಲ ಬಡತನದಿಂದ ತನ್ನ ಕಂಬಳಿಯನ್ನೇ ಒತ್ತೆಯಾಗಿ ಇಟ್ಟ ಸಂದರ್ಭದಲ್ಲಿ</verse>
				<verse number="13">ಹೊತ್ತುಮುಳುಗಿದಾಗ ಅದನ್ನು ಹಿಂದಕ್ಕೆ ಕೊಡಬೇಕು; ಅದನ್ನು ಇಟ್ಟುಕೊಂಡು ನೀವು ರಾತ್ರಿ ಮಗಲಬಾರದು; ಅವನು ಅದನ್ನು ಹೊದ್ದುಕೊಂಡು ಮಲಗಿಕೊಳ್ಳಬೇಕಲ್ಲವೆ? ಅದಲ್ಲದೆ, ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಸರ್ವೇಶ್ವರ ತಿಳಿದುಕೊಳ್ಳುವರು.</verse>
				<verse number="14">“ಸ್ವದೇಶದವರಲ್ಲೇ ಆಗಲಿ, ನಿಮ್ಮಲ್ಲಿ ಇರುವ ಅನ್ಯದೇಶದವರಲ್ಲೇ ಆಗಲಿ ಗತಿಯಿಲ್ಲದ ಬಡ ಕೂಲಿಯವನಿಗೆ ನೀವು ಏನೂ ಅನ್ಯಾಯ ಮಾಡಬಾರದು;</verse>
				<verse number="15">ದಿನದ ಕೂಲಿಯನ್ನು ಆ ದಿನದಲ್ಲೇ ಹೊತ್ತುಮುಳುಗುವುದಕ್ಕೆ ಮುಂಚಿತವಾಗಿ ಅವನಿಗೆ ಕೊಟ್ಟುಬಿಡಬೇಕು. ಅವನಿಗೆ ಬೇರೆ ಗತಿಯಿಲ್ಲದ್ದರಿಂದ ಅದನ್ನೇ ಎದುರು ನೋಡುತ್ತಿರುತ್ತಾನೆ. ನೀವು ಕೊಡದಿದ್ದರೆ ಅವನು ಸರ್ವೇಶ್ವರನಿಗೆ ಮೊರೆಯಿಡುವನು; ಆಗ ನೀವು ದೋಷಿಗಳಾಗುವಿರಿ.</verse>
				<verse number="16">“ಮಕ್ಕಳ ಪಾಪಕ್ಕಾಗಿ ತಂದೆಗೂ, ತಂದೆಯ ಪಾಪಕ್ಕಾಗಿ ಮಕ್ಕಳಿಗೂ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು.</verse>
				<verse number="17">“ನೀವು ಪರದೇಶಿಯ ಅಥವಾ ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವಾಗ ನ್ಯಾಯವನ್ನು ಬಿಟ್ಟು ತೀರ್ಪುಕೊಡಬಾರದು. ವಿಧವೆಯಿಂದ ಉಡುವ ಬಟ್ಟೆಯನ್ನು ಒತ್ತೆಯಿಡಿಸಿಕೊಳ್ಳಬಾರದು.</verse>
				<verse number="18">ನೀವೇ ಈಜಿಪ್ಟ್ ದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನುಬಿಡಿಸಿದರೆಂಬುದನ್ನು ನೆನಪುಮಾಡಿಕೊಳ್ಳಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ.</verse>
				<verse number="19">“ನೀವು ಬೆಳೆಯನ್ನು ಕೊಯ್ಯುವಾಗ ಒಂದು ಸಿವುಡನ್ನು ಹೊಲದಲ್ಲೇ ಮರೆತುಬಂದರೆ ಅದನ್ನು ತರಲು ಹಿಂದಕ್ಕೆ ಹೋಗಬಾರದು; ಪರದೇಶಿ, ತಾಯಿತಂದೆಯಿಲ್ಲದ ವ್ಯಕ್ತಿ, ವಿಧವೆ, ಇಂಥವರಿಗಾಗಿ ಅದನ್ನು ಬಿಟ್ಟುಬಿಡಿ; ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಕೆಲಸಕಾರ್ಯಗಳಲ್ಲಿ ಕೈಗೂಡಿಸಿ ನಿಮ್ಮನ್ನು ಅಭಿವೃದ್ಧಿಪಡಿಸುವರು.</verse>
				<verse number="20">ಎಣ್ಣೆಯಮರಗಳ ರೆಂಬೆಗಳಿಂದ ಕಾಯಿಗಳನ್ನು ಉದುರಿಸಿದ ಮೇಲೆ ಪುನಃ ಉದುರಿಸುವುದಕ್ಕೆ ಹೋಗಬಾರದು; ಮಿಕ್ಕ ಕಾಯಿಗಳನ್ನು ಪರದೇಶಿ, ತಾಯಿತಂದೆಯಿಲ್ಲದ ವ್ಯಕ್ತಿ, ವಿಧವೆ, ಇಂಥವರಿಗಾಗಿ ಅವುಗಳನ್ನು ಬಿಟ್ಟುಬಿಡಿ.</verse>
				<verse number="21">ದ್ರಾಕ್ಷಿತೋಟದ ಬೆಳೆಯನ್ನು ಕೂಡಿಸಿಕೊಳ್ಳುವಾಗ ಹಕ್ಕಲಾಯಬಾರದು; ಪರದೇಶಿ, ತಾಯಿತಂದೆಯಿಲ್ಲದ ವ್ಯಕ್ತಿ, ವಿಧವೆ, ಇಂಥವರಿಗಾಗಿ ಅದನ್ನು ಬಿಟ್ಟುಬಿಡಿ.</verse>
				<verse number="22">ನೀವೆ ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದದ್ದು ಜ್ಞಾಪಕದಲ್ಲಿರಬೇಕು; ಅದಕ್ಕಾಗಿಯೇ ಇದನ್ನು ನಿಮಗೆ ಆಜ್ಞಾಪಿಸುತ್ತಿದ್ದೇನೆ.</verse>
			</chapter>
			<chapter number="25">
				<verse number="1">“ಇಬ್ಬರು ವ್ಯಾಜ್ಯವಾಡುತ್ತಾ ನ್ಯಾಯಾಧಿಪತಿಗಳ ಬಳಿಗೆ ಬಂದರೆ ನ್ಯಾಯಾಧಿಪತಿಗಳು ತಪ್ಪಿಲ್ಲದವನನ್ನು ನಿರಪರಾಧಿ ಎಂದೂ ತಪ್ಪುಳ್ಳವನನ್ನು ಅಪರಾಧಿ ಎಂದೂ ತೀರ್ಮಾನಿಸಬೇಕು.</verse>
				<verse number="2">ಅಪರಾಧಿಗೆ ಪೆಟ್ಟಿನ ಶಿಕ್ಷೆ ತೀರ್ಮಾನವಾದರೆ ನ್ಯಾಯಾಧಿಪತಿ ಅವನನ್ನು ಮಲಗಿಸಿ, ಅವನ ಅಪರಾಧಕ್ಕೆ ಅನುಸಾರವಾಗಿ ಪೆಟ್ಟುಗಳನ್ನು ತನ್ನ ಮುಂದೆಯೇ ಹೊಡಿಸಿ ಲೆಕ್ಕಿಸಬೇಕು.</verse>
				<verse number="3">ಪೆಟ್ಟುಗಳ ಶಿಕ್ಷೆ ನಾಲ್ವತ್ತಕ್ಕಿಂತ ಹೆಚ್ಚಿರಬಾರದು. ಅಷ್ಟಕ್ಕಿಂತ ಮೀರಿ ನೀವು ಹೆಚ್ಚು ಪೆಟ್ಟುಗಳನ್ನು ಹೊಡಿಸಿದರೆ ನಿಮ್ಮ ಸ್ವದೇಶದವನನ್ನು ಕೇವಲ ನೀಚನನ್ನಾಗಿ ನೀವು ಕಂಡಂತಾಗುವುದು.</verse>
				<verse number="4">“ಕಣತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು.”</verse>
				<verse number="5">“ಅಣ್ಣತಮ್ಮಂದಿರು ಒಂದೇ ಕುಟುಂಬದಲ್ಲಿರುವಾಗ ಅಣ್ಣನು ಮಗನಿಲ್ಲದೆ ಸತ್ತರೆ ಅವನ ಹೆಂಡತಿ ಬೇರೆ ಪುರುಷನನ್ನು ಮದುವೆ ಆಗಬಾರದು. ಅವಳ ಮೈದುನ ಅವಳನ್ನು ಹೆಂಡತಿಯಾಗಿ ತೆಗೆದುಕೊಂಡು ಮೈದುನ ಧರ್ಮವನ್ನು ನೆರವೇರಿಸಬೇಕು.</verse>
				<verse number="6">ಅವಳಲ್ಲಿ ಹುಟ್ಟುವ ಚೊಚ್ಚಲುಮಗನನ್ನು ಸತ್ತವನ ಮಗನೆಂದೇ ಎಣಿಸಬೇಕು; ಹೀಗೆ ಮಾಡುವುದರಿಂದ ಸತ್ತವನ ಹೆಸರು ಇಸ್ರಯೇಲರಲ್ಲಿ ಅಳಿದು ಹೋಗುವುದಿಲ್ಲ.</verse>
				<verse number="7">ತಮ್ಮನು ಅಣ್ಣನ ಹೆಂಡತಿಯನ್ನು ಪರಿಗ್ರಹಿಸಲೊಲ್ಲದೆ ಹೋದರೆ ಅವಳು ಚಾವಡಿಗೆ ಹೋಗಿ ಹಿರಿಯರಿಗೆ, ‘ನನ್ನ ಗಂಡನ ತಮ್ಮನು ತನ್ನ ಅಣ್ಣನ ಹೆಸರನ್ನು ಉಳಿಸಲೊಲ್ಲನು; ಮೈದುನ ಧರ್ಮವನ್ನು ನಡಿಸುವುದಿಲ್ಲ ಎನ್ನುತ್ತಾನೆ’ ಎಂದು ತಿಳಿಸಬೇಕು.</verse>
				<verse number="8">ಆಗ ಆ ಊರಿನ ಹಿರಿಯರು ಅವನನ್ನು ಕರೆಸಿ ವಿಚಾರಿಸಿದಲ್ಲಿ ಅವನು ಅವರ ಮುಂದೆ ನಿಂತು, ‘ಈಕೆಯನ್ನು ಪರಿಗ್ರಹಿಸುವುದಕ್ಕೆ ನನಗೆ ಇಷ್ಟವಿಲ್ಲ’ ಎಂದು ಹೇಳುವ ಪಕ್ಷಕ್ಕೆ</verse>
				<verse number="9">ಅವನ ಅತ್ತಿಗೆ ಹಿರಿಯರ ಎದುರಿನಲ್ಲಿ ಅವನ ಕೆರವನ್ನು ಅವನ ಕಾಲಿನಿಂದ ತೆಗೆದುಬಿಟ್ಟು, ಅವನ ಮುಖದ ಮೇಲೆ ಉಗುಳಿ, ‘ಅಣ್ಣನಿಗೆ ಸಂತಾನವನ್ನು ಹುಟ್ಟಿಸಲೊಲ್ಲದವರೆಲ್ಲರಿಗೂ ಇಂಥ ಅವಮಾನವಾಗಲಿ,’ ಎಂದು ಹೇಳಬೇಕು.</verse>
				<verse number="10">ಆ ಮನುಷ್ಯನ ಮನೆಯವರಿಗೆ, ‘ಕೆರಬಿಚ್ಚಿಸಿಕೊಂಡವನ ಮನೆಯವರು’ ಎಂಬ ಹೆಸರು ಬರುವುದು.</verse>
				<verse number="11">“ಇಬ್ಬರು ಗಂಡಸರು ಜಗಳವಾಡುತ್ತಿರುವಾಗ ಅವರಲ್ಲಿ ಒಬ್ಬನ ಹೆಂಡತಿ ಬಂದು ತನ್ನ ಗಂಡನನ್ನು ಬಿಡಿಸಬೇಕೆಂದು ಆ ಇನ್ನೊಬ್ಬನ ಜನನೇಂದ್ರಿಯವನ್ನು ಹಿಡಿದುಕೊಂಡರೆ,</verse>
				<verse number="12">ಅವಳ ಕೈ ಕಡಿದುಹಾಕಿಸಬೇಕು; ಅವಳಿಗೆ ಕನಿಕರ ತೋರಿಸಬಾರದು.</verse>
				<verse number="13">“ಹೆಚ್ಚುಕಡಿಮೆಯಾಗಿರುವ ಎರಡು ವಿಧವಾದ ಕಳ್ಳತೂಕದ ಬಟ್ಟುಗಳನ್ನು ನಿಮ್ಮ ಚೀಲದಲ್ಲಿಟ್ಟುಕೊಳ್ಳಬೇಡಿ.</verse>
				<verse number="14">ಹೆಚ್ಚುಕಡಿಮೆಯಾದ ಎರಡು ವಿಧವಾದ ಕಳ್ಳಸೇರುಗಳು ನಿಮ್ಮ ಮನೆಯಲ್ಲಿರಬಾರದು.</verse>
				<verse number="15">ನಿಮ್ಮ ತೂಕದ ಬಟ್ಟೂ, ನಿಮ್ಮ ಅಳತೆಯ ಸೇರೂ ನ್ಯಾಯವಾಗಿಯೇ ಇರಬೇಕು. ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡಿನಲ್ಲಿ ಬಹುಕಾಲ ಬಾಳುವಿರಿ.</verse>
				<verse number="16">ನ್ಯಾಯ ವಿರುದ್ಧವಾದ ಅಳತೆತೂಕಗಳನ್ನು ಮಾಡುವವರೆಲ್ಲರು ನಿಮ್ಮ ದೇವರಾದ ಸರ್ವೇಶ್ವರನಿಗೆ ಹೇಯವಾಗಿದ್ದಾರೆ.</verse>
				<verse number="17">“ನೀವು ಈಜಿಪ್ಟ್ ದೇಶದಿಂದ ಬರುವಾಗ ದಾರಿಯಲ್ಲಿ ಅಮಾಲೇಕ್ಯರು ನಿಮ್ಮನ್ನು ಎದುರಿಸಿದ್ದನ್ನು ಜ್ಞಾಪಿಸಿಕೊಳ್ಳಿ.</verse>
				<verse number="18">ಅವರು ದೇವರಲ್ಲಿ ಸ್ವಲ್ಪವೂ ಭಯಭಕ್ತಿಯಿಲ್ಲದವರು; ನೀವು ದಣಿದು ಬಳಲಿದ್ದಾಗ ನಿಮ್ಮವರಲ್ಲಿ ಹಿಂದೆಬಿದ್ದ ಬಲಹೀನರನ್ನು ಸಂಹಾರಮಾಡಿದರು.</verse>
				<verse number="19">ಆದಕಾರಣ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲೆಂದು ಕೊಡುವ ನಾಡಿನಲ್ಲಿ ನಿಮ್ಮನ್ನು ಸೇರಿಸಿ, ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ, ಜಗದಲ್ಲಿ ಅಮಾಲೇಕ್ಯರ ಹೆಸರೇ ಉಳಿಯದಂತೆ ಮಾಡಬೇಕು; ಇದನ್ನು ಮರೆಯಬೇಡಿ.</verse>
			</chapter>
			<chapter number="26">
				<verse number="1">“ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವದೇಶವಾಗಲು ಕೊಡುವ ನಾಡನ್ನು ನೀವು ಸೇರಿ ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸುವಾಗ</verse>
				<verse number="2">ಅವರು ದಯಪಾಲಿಸಿದ ಹೊಲದ ಎಲ್ಲ ಬೆಳೆಗಳಲ್ಲೂ ಕೆಲವು ಪ್ರಥಮ ಫಲಗಳನ್ನು ಪುಟ್ಟಿಯಲ್ಲಿಟ್ಟು ನಿಮ್ಮ ದೇವರಾದ ಸರ್ವೇಶ್ವರ ತಮ್ಮ ನಾಮಸ್ಥಾಪನೆಗಾಗಿ ಆರಿಸಿಕೊಳ್ಳುವ ಸ್ಥಳಕ್ಕೆ ತೆಗೆದುಕೊಂಡುಹೋಗಿರಿ.</verse>
				<verse number="3">ಆ ಕಾಲದಲ್ಲಿ ಇರುವ ಮಹಾಯಾಜಕನಿಗೆ, ‘ಸರ್ವೇಶ್ವರ ನಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿನಲ್ಲಿ ನಾನು ಸೇರಿದ್ದಾಯಿತೆಂದು ನಾವು ಸೇವೆಮಾಡುವ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಈಗ ಒಪ್ಪಿಕೊಳ್ಳುತ್ತೇನೆ’ ಎಂದು ಹೇಳಬೇಕು.</verse>
				<verse number="4">“ಯಾಜಕನು ಆ ಪುಟ್ಟಿಯನ್ನು ನಿಮ್ಮ ಕೈಯಿಂದ ತೆಗೆದುಕೊಂಡು ನಿಮ್ಮ ದೇವರಾದ ಸರ್ವೇಶ್ವರನ ಬಲಿಪೀಠದ ಮುಂದೆ ಇಡುವನು.</verse>
				<verse number="5">ಆಗ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ಅರಾಮ್ಯನಾದ ನಮ್ಮ ಮೂಲಪಿತೃವು ಗತಿಯಿಲ್ಲದವನಾಗಿ ಸ್ವಲ್ಪ ಮಂದಿಯೊಡನೆ ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ಇಳಿದುಕೊಂಡನು. ಅಲ್ಲಿ ಅವನ ಸಂತಾನದವರು ಹೆಚ್ಚಿ ಮಹಾಬಲಿಷ್ಠ ಜನಾಂಗವಾದರು.</verse>
				<verse number="6">ಈಜಿಪ್ಟರು ನಮ್ಮನ್ನು ಉಪದ್ರವಪಡಿಸಿ, ಬಾಧಿಸಿ, ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು.</verse>
				<verse number="7">ಆಗ ನಾವು ನಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ಮೊರೆಯಿಟ್ಟೆವು; ಅವರು ಆಲಿಸಿ ನಮ್ಮ ದುರವಸ್ಥೆಯನ್ನೂ ಕಷ್ಟ ಉಪದ್ರವಗಳನ್ನೂ ನೋಡಿ,</verse>
				<verse number="8">ಭುಜಬಲ, ಶಿಕ್ಷಾಹಸ್ತ, ಮಹಾಭೀತಿ, ಮಹತ್ಕಾರ್ಯ, ಸೂಚಕಕಾರ್ಯ, ಇವುಗಳನ್ನು ಪ್ರಯೋಗಿಸಿ ನಮ್ಮನ್ನು ಬಿಡಿಸಿದರು.</verse>
				<verse number="9">ಈಜಿಪ್ಟ್ ದೇಶದಿಂದ ಕರೆದುತಂದು ಹಾಲೂಜೇನೂ ಹರಿಯುವ ಈ ನಾಡನ್ನು ನಮಗೆ ಕೊಟ್ಟಿದ್ದಾರೆ.</verse>
				<verse number="10">ಆದುದರಿಂದ ಸರ್ವೇಶ್ವರಾ, ನೀವು ಅನುಗ್ರಹಿಸಿರುವ ಭೂಮಿಯ ಬೆಳೆಯಲ್ಲಿ ಪ್ರಥಮಫಲಗಳನ್ನು ನಾವು ಕಾಣಿಕೆಯಾಗಿ ತಂದಿದ್ದೇವೆ; ಸ್ವೀಕರಿಸಬೇಕು’ ಎಂದು ಹೇಳಿ ಆ ಪ್ರಥಮಫಲಗಳನ್ನು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿಟ್ಟು ಅವರನ್ನು ಆರಾಧಿಸಬೇಕು.</verse>
				<verse number="11">ಸರ್ವೇಶ್ವರ ನಿಮಗೂ ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲ ಸುಖ ಸಂತೋಷಗಳಿಗಾಗಿ ನೀವೂ ಲೇವಿಯರೂ ನಿಮ್ಮ ಮಧ್ಯೆಯಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು.</verse>
				<verse number="12">“ದಶಮಾಂಶವನ್ನು ಕೊಡಬೇಕಾದ ಮೂರನೆಯ ಸಂವತ್ಸರದಲ್ಲಿ ನಿಮಗುಂಟಾದ ಆದಾಯದ ದಶಮ ಭಾಗವನ್ನು ಪ್ರತ್ಯೇಕಿಸಿದಾಗ ನಿಮ್ಮ ನಿಮ್ಮ ಊರುಗಳಲ್ಲಿರುವ ಲೇವಿಯರು, ಪರದೇಶಿಗಳು, ತಾಯಿತಂದೆಯಿಲ್ಲದವರು ಹಾಗು ವಿಧವೆಯರೂ ಉಂಡು ಸಂತೋಷವಾಗಿರುವಂತೆ ಅದನ್ನು ಅವರಿಗೆ ಕೊಡಬೇಕು.</verse>
				<verse number="13">ಆಗ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ, ‘ನಾವು ಮೀಸಲಾದ ವಸ್ತುಗಳನ್ನು ಮನೆಯಿಂದ ತೆಗೆದುಬಿಟ್ಟಿದ್ದೇವೆ; ನೀವು ಆಜ್ಞಾಪಿಸಿದ ಮೇರೆಗೆ ಅವುಗಳನ್ನು ಲೇವಿಯನಿಗೆ, ಪರದೇಶಿಗೆ, ತಾಯಿತಂದೆ ಇಲ್ಲದ ವ್ಯಕ್ತಿಗೆ, ವಿಧವೆಗೆ ಇಂಥವರಿಗೆ ಕೊಟ್ಟು ಇದ್ದೇವೆ, ನಿಮ್ಮ ಆಜ್ಞೆಗಳಲ್ಲಿ ಒಂದನ್ನೂ ಮೀರಲಿಲ್ಲ, ಮರೆಯಲೂ ಇಲ್ಲ.</verse>
				<verse number="14">ನಾವು ಸತ್ತವರಿಗಾಗಿ ದುಃಖಿಸುವ ಕಾಲದಲ್ಲೆಲ್ಲಾ ಅದರಲ್ಲಿ ಏನೂ ತಿನ್ನಲಿಲ್ಲ; ಅಶುದ್ಧರಾಗಿ ಅದನ್ನು ತೆಗೆದು ಹಾಕಲಿಲ್ಲ; ಸತ್ತವರಿಗಾಗಿ ಅದರಲ್ಲಿ ಏನೂ ಕೊಡಲಿಲ್ಲ; ನಮ್ಮ ದೇವರಾದ ಸರ್ವೇಶ್ವರನ ಮಾತಿನಲ್ಲಿ ಲಕ್ಷ್ಯವಿಟ್ಟು ನೀವು ಆಜ್ಞಾಪಿಸಿದ್ದನ್ನೆಲ್ಲಾ ಅನುಸರಿಸಿದ್ದೇವೆ.</verse>
				<verse number="15">ನೀವು ನಿಮ್ಮ ಪರಿಶುದ್ಧ ವಾಸಸ್ಥಾನವಾಗಿರುವ ಪರಲೋಕದಿಂದ ಕೆಳಗಿರುವ ನಮ್ಮನ್ನು ಕಟಾಕ್ಷಿಸಿ, ನಿಮ್ಮ ಜನರಾದ ಇಸ್ರಯೇಲರನ್ನು ಹಾಗು ಹಾಲೂಜೇನೂ ಹರಿಯುವ ನಾಡೆಂದು ನೀವು ನಮ್ಮ ಪಿತೃಗಳಿಗೆ ವಾಗ್ದಾನಮಾಡಿದ ಮೇರೆಗೆ ನಮಗೆ ಕೊಟ್ಟಿರುವ ಈ ಭೂಮಿಯನ್ನು ಆಶೀರ್ವದಿಸಿ, ದೇವರೇ,’ ಎಂದು ಹೇಳಬೇಕು.</verse>
				<verse number="16">“ಈ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕೆಂದು ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಇಂದು ಆಜ್ಞಾಪಿಸಿದ್ದಾರೆ. ಆದುದರಿಂದ ನೀವು ಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಇವುಗಳನ್ನು ಕೈಕೊಂಡು ನಡೆಯಬೇಕು.</verse>
				<verse number="17">ನಮಗೆ ಸರ್ವೇಶ್ವರನೇ ದೇವರಾಗಿರುವರೆಂದು ಹಾಗು ಅವರು ಹೇಳಿದ ಮಾರ್ಗದಲ್ಲೇ ನಡೆದು ಅವರ ಆಜ್ಞಾವಿಧಿನಿರ್ಣಯಗಳನ್ನು ಕೈಕೊಂಡು ಅವರ ಮಾತಿಗೆ ಲಕ್ಷ್ಯಕೊಡುವೆವೆಂದೂ ನೀವು ಈಗ ಒಡಂಬಟ್ಟಿದ್ದೀರಿ.</verse>
				<verse number="18">ಸರ್ವೇಶ್ವರ ಸ್ವಾಮಿ ಆದರೋ ನಿಮ್ಮ ವಿಷಯದಲ್ಲಿ, ‘ಇವರು ನನ್ನ ಆಜ್ಞೆಗಳನ್ನೆಲ್ಲ ಅನುಸರಿಸುವವರಾದರೆ ನನ್ನ ವಾಗ್ದಾನಾನುಸಾರ ನನಗೆ ಸ್ವಕೀಯಜನರಾಗಿರುವರು.</verse>
				<verse number="19">ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತ ಇವರಿಗೆ ಹೆಚ್ಚಾದ ಕೀರ್ತಿಘನಮಾನಗಳನ್ನುಂಟು ಮಾಡುವೆನು ಹಾಗು ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಸರ್ವೇಶ್ವರನಿಗೆ ಮೀಸಲಾದ ಜನರಾಗಲು ಒಡಂಬಟ್ಟಿದ್ದಾರೆ,’ ಎನ್ನುವರು,” ಎಂದು ಹೇಳಿದನು.</verse>
			</chapter>
			<chapter number="27">
				<verse number="1">ಮೋಶೆ ಇಸ್ರಯೇಲರ ಹಿರಿಯರ ಸಹಿತ ಜನರಿಗೆ, “ನಾನು ಈಗ ಆಜ್ಞಾಪಿಸಿದ ಧರ್ಮೋಪದೇಶವನ್ನೆಲ್ಲಾ ನೀವು ಅನುಸರಿಸಬೇಕು.</verse>
				<verse number="2">ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಡುವ ನಾಡನ್ನು ಪ್ರವೇಶಿಸುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟುವಾಗ ಅಂದರೆ, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರ ತಾವು ವಾಗ್ದಾನ ಮಾಡಿದಂತೆ ನಿಮಗೆ ಕೊಡುವ ಹಾಲೂ ಜೇನೂ ಹರಿಯುವ ನಾಡನ್ನು ಪ್ರವೇಶಿಸುವುದಕ್ಕೆ ನೀವು ಜೋರ್ಡನ್ ನದಿಯನ್ನು ದಾಟುವಾಗ, ನೀವು ದೊಡ್ಡ ಕಲ್ಲುಗಳನ್ನು ನಿಲ್ಲಿಸಬೇಕು. ಅವುಗಳಿಗೆ ಗಿಲಾವು ಮಾಡಿಸಿ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ಅವುಗಳ ಮೇಲೆ ಬರೆಯಿಸಬೇಕು.</verse>
				<verse number="3"></verse>
				<verse number="4">ನೀವು ಜೋರ್ಡನ್ ನದಿಯನ್ನು ದಾಟಿದನಂತರ ನಾನು ಈಗ ಆಜ್ಞಾಪಿಸಿದ ಕಲ್ಲುಗಳನ್ನು ಏಬಾಲ್ ಬೆಟ್ಟದ ಮೇಲೆ ನಿಲ್ಲಿಸಿ ಅವುಗಳಿಗೆ ಗಿಲಾವು ಮಾಡಿಸಬೇಕು</verse>
				<verse number="5">“ಅಲ್ಲಿ ನಿಮ್ಮ ದೇವರಾದ ಸರ್ವೇಶ್ವರನಿಗೆ ನೀವು ಕಲ್ಲುಗಳಿಂದ ಬಲಿಪೀಠವನ್ನು ಕಟ್ಟಿಸಬೇಕು.</verse>
				<verse number="6">ಉಳಿ ಮುಂತಾದುದನ್ನು ಉಪಯೋಗಿಸದೆ ಹುಟ್ಟು ಕಲ್ಲುಗಳಿಂದಲೇ ನಿಮ್ಮ ದೇವರಾದ ಸರ್ವೇಶ್ವರನ ಬಲಿಪೀಠವನ್ನು ಕಟ್ಟಿಸಬೇಕು.</verse>
				<verse number="7">ಅಲ್ಲಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿ ಸಹಭೋಜನ ಮಾಡಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂಭ್ರಮದಿಂದಿರಬೇಕು.</verse>
				<verse number="8">ನೀವು ಆ ಕಲ್ಲುಗಳ ಮೇಲೆ ಈ ಧರ್ಮಶಾಸ್ತ್ರದ ವಾಕ್ಯಗಳನ್ನೆಲ್ಲಾ ವಿರಳವಾಗಿ ಹಾಗು ಸ್ಪಷ್ಟವಾಗಿ ಬರೆಸಬೇಕು,” ಎಂದು ಆಜ್ಞಾಪಿಸಿದನು.</verse>
				<verse number="9">ಯಾಜಕರಾದ ಲೇವಿಯರೊಡನೆ ಮೋಶೆ ಇಸ್ರಯೇಲರೆಲ್ಲರಿಗೆ, “ಇಸ್ರಯೇಲರೇ, ನಿಶ್ಯಬ್ದವಾಗಿದ್ದು ಕೇಳಿರಿ: ನೀವು ಈಗ ನಿಮ್ಮ ದೇವರಾದ ಸರ್ವೇಶ್ವರನ ಜನರಾದಿರಿ.</verse>
				<verse number="10">ಆದುದರಿಂದ ಈಗ ನಾನು ನಿಮಗೆ ಹೇಳುವ ಆತನ ಮಾತುಗಳಿಗೆ ಕಿವಿಗೊಟ್ಟು ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಬೇಕು,” ಎಂದು ಹೇಳಿದನು.</verse>
				<verse number="11">ಮೋಶೆ ಆ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನೆಂದರೆ,</verse>
				<verse number="12">“ನೀವು ಜೋರ್ಡನ್ ನದಿಯನ್ನು ದಾಟಿದ ಮೇಲೆ ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೋಸೆಫ್, ಬೆನ್ಯಾಮೀನ್ ಎಂಬೀ ಕುಲಗಳವರು ಗೆರಿಜ್ಜೀಮ್ ಬೆಟ್ಟದ ಮೇಲೆ ನಿಂತುಕೊಂಡು ಜನರಿಗೆ ಆಶೀರ್ವಚನಗಳನ್ನು ಉಚ್ಚರಿಸಬೇಕು.</verse>
				<verse number="13">ರೂಬೇನ್, ಗಾದ್, ಆಶೇರ್, ಜೆಬುಲೂನ್, ದಾನ್, ನಫ್ತಾಲಿ ಎಂಬೀ ಕುಲಗಳವರು ಏಬಾಲ್ ಬೆಟ್ಟದ ಮೇಲೆ ನಿಂತುಕೊಂಡು ಶಾಪೋಕ್ತಿಗಳನ್ನು ಉಚ್ಚರಿಸಬೇಕು.</verse>
				<verse number="14">“ಲೇವಿಯರು ಗಟ್ಟಿಯಾದ ಸ್ವರದಿಂದ ಇಸ್ರಯೇಲರೆಲ್ಲರಿಗೆ,</verse>
				<verse number="15">‘ಶಿಲ್ಪಿಯ ಕೆಲಸವಾಗಿ ಇರುವ ಮರದ ವಿಗ್ರಹ ಹಾಗು ಲೋಹವಿಗ್ರಹ ಸರ್ವೇಶ್ವರನಿಗೆ ಹೇಯವಾದದ್ದು. ಆದುದರಿಂದ ಅವನ್ನು ಮಾಡಿಸಿ ಗೋಪ್ಯವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,’ ಎನ್ನಲು ಜನರೆಲ್ಲರು, ‘ಆಮೆನ್’ ಎನ್ನಬೇಕು.</verse>
				<verse number="16">“ಲೇವಿಯರು, ‘ತಂದೆತಾಯಿಗಳನ್ನು ಅವಮಾನಪಡಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.</verse>
				<verse number="17">“ಅವರು, ‘ಮತ್ತೊಬ್ಬನ ಗಡಿಮೇರೆಯನ್ನು ಸರಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.</verse>
				<verse number="18">“ಅವರು, ‘ಕುರುಡರಿಗೆ ದಾರಿತಪ್ಪಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.</verse>
				<verse number="19">“ಅವರು, ‘ಪರದೇಶಿ, ತಾಯಿತಂದೆ ಇಲ್ಲದ ವ್ಯಕ್ತಿ, ಇವರ ವ್ಯಾಜ್ಯದಲ್ಲಿ ನ್ಯಾಯಬಿಟ್ಟು ತೀರ್ಪು ಹೇಳಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು</verse>
				<verse number="20">‘ಅವರು, ‘ಮಲತಾಯಿಯನ್ನು ಸಂಗಮಿಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.</verse>
				<verse number="21">“ಅವರು, ‘ಪಶುಸಂಗಮ ಮಾಡಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.</verse>
				<verse number="22">“ಅವರು, ‘ತಂದೆಯ ಮಗಳನ್ನಾಗಲಿ ತಾಯಿಯ ಮಗಳನ್ನಾಗಲಿ ಸಂಗಮಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.</verse>
				<verse number="23">“ಅವರು, ‘ಅತ್ತೆಯನ್ನು ಸಂಗಮಿಸಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.</verse>
				<verse number="24">“ಅವರು, ‘ರಹಸ್ಯವಾಗಿ ನರಹತ್ಯ ಮಾಡಿದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.</verse>
				<verse number="25">“ಅವರು, ‘ಹಣತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.</verse>
				<verse number="26">“ಅವರು, ಈ ಧರ್ಮಶಾಸ್ತ್ರ ವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತ,’ ಎನ್ನಲು ಜನರೆಲ್ಲರು, ‘ಆಮೆನ್’, ಎನ್ನಬೇಕು.</verse>
			</chapter>
			<chapter number="28">
				<verse number="1">“ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಅವರು ಜಗದ ಎಲ್ಲ ಜನಾಂಗಗಳಿಗಿಂತ ನಿಮ್ಮನ್ನು ಉನ್ನತಸ್ಥಿತಿಗೆ ತರುವರು.</verse>
				<verse number="2">ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಟ್ಟು ನಡೆದರೆ ಈ ಕೆಳಕಂಡ ಶುಭಗಳೆಲ್ಲ ನಿಮಗೆ ಪ್ರಾಪ್ತವಾಗುವುವು:</verse>
				<verse number="3">“ನಿಮಗೆ ಊರಲ್ಲೂ ಅಡವಿಯಲ್ಲೂ ಶುಭವುಂಟಾಗುವುದು.</verse>
				<verse number="4">ನಿಮ್ಮ ಸಂತಾನಕ್ಕೂ ವ್ಯವಸಾಯಗಳಿಗೂ ದನಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವುದು.</verse>
				<verse number="5">ನಿಮ್ಮ ಧಾನ್ಯಕ್ಕೂ ಅದರಿಂದ ಮಾಡುವ ಭೋಜನಕ್ಕೂ ಶುಭ ಉಂಟಾಗುವುದು.</verse>
				<verse number="6">ನೀವು ಕೆಲಸಕ್ಕೆ ಹೋಗುವಾಗಲೂ ಬರುವಾಗಲೂ ಶುಭವುಂಟಾಗುವುದು.</verse>
				<verse number="7">“ನಿಮ್ಮ ಮೇಲೆ ಎರಗುವ ಶತ್ರುಗಳು ನಿಮ್ಮಿಂದ ಸೋತುಹೋಗುವಂತೆ ಸರ್ವೇಶ್ವರ ಮಾಡುವರು; ಅವರು ಒಂದೇ ದಾರಿಯಿಂದ ನಿಮ್ಮ ಮೇಲೆ ಬಂದರೂ ಏಳು ದಾರಿಗಳಿಂದ ಓಡಿಹೋಗುವರು.</verse>
				<verse number="8">“ನಿಮ್ಮ ಕಣಜಗಳು ಯಾವಾಗಲೂ ತುಂಬಿ ಇರುವಂತೆ ಹಾಗು ನಿಮ್ಮ ಪ್ರಯತ್ನಗಳೆಲ್ಲಾ ಸಫಲವಾಗುವಂತೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಶುಭವನ್ನು ಅನುಗ್ರಹಿಸುವರು. ಅವರು ನಿಮಗೆ ಕೊಡುವ ನಾಡಿನಲ್ಲಿ ನಿಮಗೆ ಶುಭವನ್ನೇ ಉಂಟುಮಾಡುವರು.</verse>
				<verse number="9">“ನೀವು ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನು ಅನುಸರಿಸಿ, ಅವರು ಹೇಳಿದ ಮಾರ್ಗದಲ್ಲೇ ನಡೆದರೆ ಅವರು ವಾಗ್ದಾನಮಾಡಿದಂತೆ ನಿಮ್ಮನ್ನು ತಮ್ಮ ಮೀಸಲಾದ ಜನರನ್ನಾಗಿ ನೆಲೆಗೊಳಿಸುವರು.</verse>
				<verse number="10">ಜಗದ ಜನರೆಲ್ಲರು ನಿಮ್ಮನ್ನು ಸರ್ವೇಶ್ವರನ ಜನರೆಂದು ತಿಳಿದುಕೊಂಡು ನಿಮಗೆ ಭಯಪಡುವರು.</verse>
				<verse number="11">“ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಮೇರೆಗೆ, ನಿಮಗೆ ಕೊಡುವ ನಾಡಿನಲ್ಲಿ ಅವರು ನಿಮಗೆ ಸಂತಾನ, ಪಶು, ವ್ಯವಸಾಯಗಳ ಸಮೃದ್ಧಿಯನ್ನುಂಟುಮಾಡುವರು.</verse>
				<verse number="12">ಸರ್ವೇಶ್ವರ ಆಕಾಶದಲ್ಲಿರುವ ತಮ್ಮ ಜಲನಿಧಿಯನ್ನು ತೆರೆದು ನಿಮ್ಮ ನಾಡಿನ ಮೇಲೆ, ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲ ವ್ಯವಸಾಯವನ್ನೂ ಫಲಭರಿತವಾಗಿ ಮಾಡುವರು. “ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.</verse>
				<verse number="13">ನಾನು ಈಗ ನಿಮಗೆ ಬೋಧಿಸುವ ಮಾತುಗಳನ್ನು ನೀವು ಬಿಟ್ಟು ಎಡಬಲಕ್ಕೆ ಹೋಗದೆ, ಬೇರೆ ದೇವರುಗಳನ್ನು ಅವಲಂಬಿಸದೆ, ನಿಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳಲ್ಲೇ ಲಕ್ಷ್ಯವಿಟ್ಟು ಅವುಗಳನ್ನೇ ಅನುಸರಿಸಿ ನಡೆದರೆ ಅವರು ಇತರರಿಗೆ ನಿಮ್ಮನ್ನು ಅಧೀನಮಾಡದೆ, ಎಲ್ಲರಿಗೂ ಶಿರಸ್ಸನ್ನಾಗಿಯೇ ಮಾಡುವರು; ನೀವು ಎಲ್ಲರಿಗಿಂತಲೂ ಮೇಲಿನವರಾಗುವಿರೇ ಹೊರತು ಕೆಳಗಿನವರಾಗಿ ಇರುವುದಿಲ್ಲ.</verse>
				<verse number="14"></verse>
				<verse number="15">“ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ, ಈ ಕೆಳಕಂಡ ಅಶುಭಗಳು ನಿಮಗೆ ಪ್ರಾಪ್ತವಾಗುವುವು:</verse>
				<verse number="16">“ನಿಮಗೆ ಊರಲ್ಲೂ ಅಡವಿಯಲ್ಲೂ ಅಶುಭವುಂಟಾಗುವುದು.</verse>
				<verse number="17">ನಿಮ್ಮ ಧಾನ್ಯಗಳಿಗೂ ಅವುಗಳಿಂದಾದ ಭೋಜನಗಳಿಗೂ ಅಶುಭ ಉಂಟಾಗುವುದು.</verse>
				<verse number="18">ನಿಮ್ಮ ಸಂತಾನಗಳಿಗೆ, ವ್ಯವಸಾಯಗಳಿಗೆ, ಹಾಗು ದನಕುರಿಗಳಿಗೆ ಅಶುಭ ಉಂಟಾಗುವುದು.</verse>
				<verse number="19">ನೀವು ಕೆಲಸಕ್ಕೆ ಹೋಗುವಾಗಲೂ ಬರುವಾಗಲೂ ಅಶುಭವುಂಟಾಗುವುದು.</verse>
				<verse number="20">“ನೀವು ದುರ್ನಡತೆಯುಳ್ಳವರಾಗಿ ಸರ್ವೇಶ್ವರನನ್ನು ಬಿಟ್ಟದ್ದರಿಂದ ಅವರು ನಿಮ್ಮ ಎಲ್ಲ ಪ್ರಯತ್ನಗಳಲ್ಲೂ ವಿಪತ್ತು, ಕಳವಳ, ಶಾಪ, ಇವುಗಳನ್ನುಂಟುಮಾಡುತ್ತಾ ನಿಮ್ಮನ್ನು ಬೇಗನೆ ನಾಶಮಾಡುವರು.</verse>
				<verse number="21">ವ್ಯಾಧಿ ನಿಮಗೆ ಹತ್ತಿಕೊಂಡೇ ಇರುವಂತೆ ಮಾಡಿ ನೀವು ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ನಿಮ್ಮಲ್ಲಿ ಒಬ್ಬರೂ ಉಳಿಯದಂತೆ ಸರ್ವೇಶ್ವರ ಮಾಡುವರು.</verse>
				<verse number="22">ನಿಮ್ಮನ್ನು ಕ್ಷಯರೋಗ, ಚಳಿಜ್ವರ, ಉರಿತ, ಉಷ್ಣಜ್ವರ ಇವುಗಳಿಂದಲೂ, ನಾಡನ್ನು ಕ್ಷಾಮದಿಂದಲೂ, ಬೆಳೆಯನ್ನು ಕಾಡಿನ ಬಿಸಿಗಾಳಿಗಳಿಂದಲೂ ಪೀಡಿಸುವರು. ನೀವು ಸಾಯುವ ತನಕ ಈ ಪೀಡೆಗಳು ನಿಮ್ಮನ್ನು ಬೆನ್ನತ್ತುವುವು.</verse>
				<verse number="23">ಆಮೇಲೆ ಆಕಾಶ ಮಳೆ ಸುರಿಸದೆ ತಾಮ್ರದಂತೆಯೂ ಕೆಳಗೆ ಭೂಮಿ ಬೆಳೆಕೊಡದೆ ಕಬ್ಬಿಣದಂತೆಯೂ ಇರುವುವು.</verse>
				<verse number="24">ನಿಮ್ಮ ನಾಡಿನ ಮೇಲೆ ಆಕಾಶದಿಂದ ಮಳೆಗೆ ಬದಲಾಗಿ ಧೂಳಿಯನ್ನೂ ಉಸುಬನ್ನೂ ಸರ್ವೇಶ್ವರ ಸುರಿಸುವರು; ಇದರಿಂದ ನೀವು ನಾಶವಾಗಿ ಹೋಗುವಿರಿ.</verse>
				<verse number="25">ಶತ್ರುಗಳಿಂದ ನೀವುಪರಾಜಯವನ್ನು ಹೊಂದುವಂತೆ ಸರ್ವೇಶ್ವರ ಮಾಡುವರು; ನೀವು ಒಂದೇ ದಾರಿಯಿಂದ ಅವರ ಮೇಲೆ ದಾಳಿಮಾಡಲು ಹೋಗಿ ಏಳು ದಾರಿ ಹಿಡಿದು ಓಡಿಹೋಗುವಿರಿ. ಜಗದ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವುವು.</verse>
				<verse number="26">ನಿಮ್ಮ ಹೆಣಗಳು ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು; ಅವುಗಳನ್ನು ಬೆದರಿಸಿ ಓಡಿಸುವುದಕ್ಕೂ ಯಾರೂ ಇರುವುದಿಲ್ಲ.</verse>
				<verse number="27">“ಈಜಿಪ್ಟರನ್ನು ಬಾಧಿಸಿದಂತೆ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಸರ್ವೇಶ್ವರ ನಿಮ್ಮನ್ನು ಬಾಧಿಸುವರು.</verse>
				<verse number="28">ಹುಚ್ಚುತನ, ಕುರುಡುತನ, ಬೆಪ್ಪುತನ ಇವುಗಳಿಂದ ಸರ್ವೇಶ್ವರ ನಿಮ್ಮನ್ನು ಪೀಡಿಸುವರು.</verse>
				<verse number="29">ಕುರುಡರಂತೆ ನಡುಮಧ್ಯಾಹ್ನದಲ್ಲೂ ಕತ್ತಲಾಯಿತೆಂದು ನೀವು ತಡವರಿಸುವಿರಿ; ನೀವು ಮಾಡುವ ಕೆಲಸ ಯಾವುದೂ ಕೈಗೂಡುವುದಿಲ್ಲ. ಅನ್ಯರು ನಿಮ್ಮನ್ನು ನಿರಂತರವಾಗಿ ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು. ನಿಮಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ.</verse>
				<verse number="30">“ನೀವು ಮದುವೆಮಾಡಿಕೊಂಡ ಮಹಿಳೆಯನ್ನು ಮತ್ತೊಬ್ಬನು ಮಾನಭಂಗಪಡಿಸುವನು; ನೀವು ಕಟ್ಟಿಕೊಂಡ ಮನೆಯಲ್ಲಿ ಮತ್ತೊಬ್ಬನು ವಾಸಮಾಡುವನು; ನೀವು ಮಾಡಿದ ದ್ರಾಕ್ಷಿತೋಟದ ಬೆಳೆ ನಿಮಗೆ ದೊರಕದು.</verse>
				<verse number="31">ನಿಮ್ಮ ಪಶುಗಳನ್ನು ನಿಮ್ಮ ಕಣ್ಣಮುಂದೆಯೇ ಕೊಯ್ಯುವರು; ಆದರೆ ಅವುಗಳ ಮಾಂಸ ನಿಮಗೆ ಸಿಕ್ಕದು. ನಿಮ್ಮ ಕತ್ತೆಯನ್ನು ನಿಮ್ಮೆದುರಿಗೇ ಬಲಾತ್ಕಾರದಿಂದ ಹಿಡಿದುಕೊಂಡು ಹೋಗುವರು. ಆದರೆ ಅದನ್ನು ನಿಮಗೆ ಹಿಂದಕ್ಕೆ ಕೊಡುವುದಿಲ್ಲ. ನಿಮ್ಮ ಆಡುಕುರಿಗಳು ಶತ್ರುಗಳ ಪಾಲಾಗುವುವು. ನಿಮಗೆ ರಕ್ಷಕರು ಯಾರೂ ಇರುವುದಿಲ್ಲ.</verse>
				<verse number="32">ನಿಮ್ಮ ಗಂಡು ಹೆಣ್ಣು ಮಕ್ಕಳನ್ನು ನಿಮ್ಮ ಮುಂದೆಯೇ ಹಿಡಿದು ಅನ್ಯರಿಗೆ ವಶಪಡಿಸುವರು; ನೀವು ಹಗಲೆಲ್ಲಾ ಅವರನ್ನು ಕಾಣಬೇಕೆಂದು ಹಂಬಲಿಸುತ್ತಾ ಕಂಗೆಡುವಿರಿ; ಆದರೆ ನಿಮ್ಮ ಯತ್ನವೇನೂ ಸಾಗುವುದಿಲ್ಲ.</verse>
				<verse number="33">ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ನಾಡಿನ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ನಿರಂತರ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗುವಿರಿ.</verse>
				<verse number="34">ನಿಮ್ಮ ಮುಂದೆ ನಡೆಯುವ ದೃಶ್ಯಗಳನ್ನು ನೋಡಿ ಹುಚ್ಚರಾಗಿಹೋಗುವಿರಿ.</verse>
				<verse number="35">“ನಿಮ್ಮ ಮೊಣಕಾಲುಗಳಲ್ಲೂ ತೊಡೆಗಳಲ್ಲೂ ಮತ್ತು ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ವಾಸಿಯಾಗದ ಕೆಟ್ಟಕೆಟ್ಟ ಹುಣ್ಣುಗಳನ್ನು ಸರ್ವೇಶ್ವರ ಹುಟ್ಟಿಸಿ ಬಾಧಿಸುವರು;</verse>
				<verse number="36">ನಿಮಗೂ ನಿಮ್ಮ ಪಿತೃಗಳಿಗೂ ಗೊತ್ತಿಲ್ಲದ ಜನಾಂಗದವರ ದೇಶಕ್ಕೆ ನಿಮ್ಮನ್ನೂ ನೀವು ನೇಮಿಸಿಕೊಳ್ಳುವ ಅರಸರನ್ನೂ ಒಯ್ಯಿಸುವರು; ಅಲ್ಲಿ ನೀವು ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.</verse>
				<verse number="37">ಸರ್ವೇಶ್ವರ ನಿಮ್ಮನ್ನು ಒಯ್ಯಿಸುವ ಜನಾಂಗಗಳಲ್ಲಿ ನೀವು ಭೀಕರತೆಗೂ ನಿಂದೆಲಾವಣಿಗೂ ಪರಿಹಾಸ್ಯಕ್ಕೂ ಗುರಿಯಾಗುವಿರಿ.</verse>
				<verse number="38">“ಹೊಲದಲ್ಲಿ ನೀವು ಎಷ್ಟು ಬೀಜ ಬಿತ್ತಿದರೂ ಮಿಡತೆಯ ದಂಡುಬಂದು ಅದನ್ನು ತಿಂದುಬಿಡುವುದು; ನಿಮಗೆ ದೊರೆಯುವ ಬೆಳೆ ಅತ್ಯಲ್ಪವಾಗುವುದು;</verse>
				<verse number="39">ದ್ರಾಕ್ಷಾವ್ಯವಸಾಯವನ್ನು ನೀವು ಎಷ್ಟುಮಾಡಿದರೂ ಅದರ ಹಣ್ಣುಗಳನ್ನು ಹುಳುಗಳೇ ತಿಂದುಹಾಕುವುವು; ನೀವು ಕೂಡಿಸಿಕೊಳ್ಳಲು ನಿಮಗೆ ಬಿಡವು. ಅವುಗಳ ರಸವನ್ನು ರುಚಿನೋಡಗೊಡಿಸವು.</verse>
				<verse number="40">ನಿಮ್ಮ ದೇಶಪ್ರದೇಶಗಳಲ್ಲಿ ಎಣ್ಣೇಮರಗಳು ಎಷ್ಟಿದ್ದರೂ ಅವುಗಳ ಕಾಯಿಗಳು ಉದುರಿಹೋಗುವುವು; ಮೈಗೆ ಹಚ್ಚಿಕೊಳ್ಳಲು ಎಣ್ಣೆ ಸಿಗದು.</verse>
				<verse number="41">ನಿಮಗೆ ಗಂಡುಹೆಣ್ಣು ಮಕ್ಕಳು ಎಷ್ಟು ಹುಟ್ಟಿದರೂ ಅವರು ಸೆರೆಯವರಾಗಿ ಒಯ್ಯಲ್ಪಡುವರು; ನಿಮ್ಮ ಬಳಿ ಅವರು ಇರರು.</verse>
				<verse number="42">ನಿಮ್ಮ ಗಿಡಮರಗಳೂ ಪಚ್ಚೆಪೈರುಗಳೂ ಮಿಡತೆಯ ಪಾಲಾಗುವುವು.</verse>
				<verse number="43">ನಿಮ್ಮ ಮಧ್ಯೆಯಿರುವ ಅನ್ಯರು ನಿಮಗಿಂತಲೂ ಹೆಚ್ಚೆಚ್ಚಾಗಿ ಅಭಿವೃದ್ಧಿಗೆ ಬರುವರು; ನೀವೋ ಕಡಿಮೆ ಆಗುತ್ತಾ ಹೀನಸ್ಥಿತಿಗೆ ಇಳಿಯುವಿರಿ.</verse>
				<verse number="44">ಅವರು ನಿಮಗೆ ಸಾಲಕೊಡುವರೇ ಹೊರತು ನೀವು ಅವರಿಗೆ ಕೊಡುವುದಿಲ್ಲ. ನೀವು ಅವರಿಗೆ ಅಧೀನರಾಗುವಿರಿ; ಅವರು ನಿಮಗೆ ಶಿರಸ್ಸಾಗುವರು.</verse>
				<verse number="45">“ನೀವು ನಿಮ್ಮ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದೆ ಅವರು ನೇಮಿಸಿದ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದುದರಿಂದ ಈ ಎಲ್ಲಾ ಅಶುಭಗಳು ನಿಮಗೆ ಪ್ರಾಪ್ತವಾಗಿ, ನಿಮ್ಮನ್ನು ಹಿಂದಟ್ಟಿ ಹಿಡಿದು, ಕಡೆಗೆ ನಾಶಮಾಡುವುವು.</verse>
				<verse number="46">ಇವು ನಿಮಗೂ ನಿಮ್ಮ ಸಂತತಿಯವರಿಗೂ ನಿರಂತರವಾಗಿ ಪ್ರಾಪ್ತವಾಗುವುವು; ಸರ್ವರಿಗೆ ಬೆರಗನ್ನೂ ಎಚ್ಚರಿಕೆಯನ್ನೂ ಉಂಟುಮಾಡುವುವು.</verse>
				<verse number="47">“ನಿಮಗೆ ಸರ್ವಸಮೃದ್ಧಿಯುಂಟಾದ ಕಾಲದಲ್ಲಿ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೆ ಹರ್ಷಾನಂದದಿಂದ ಸೇವೆಮಾಡದೆಹೋದಿರಿ.</verse>
				<verse number="48">ಆದುದರಿಂದ ಸರ್ವೇಶ್ವರ ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವರು; ಆಗ ನೀವು ಹಸಿವು ಬಾಯಾರಿಕೆಗಳಿಗೆ ಗುರಿಯಾಗಿ ಬಟ್ಟೆಬರೆ ಏನೂ ಇಲ್ಲದೆ, ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಕಬ್ಬಿಣದ ನೊಗವನ್ನು ಹೇರಿಸಿ ಸರ್ವೇಶ್ವರ ನಿಮ್ಮನ್ನು ನಾಶಮಾಡುವರು;</verse>
				<verse number="49">ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗ, ರಣಹದ್ದು ಹೇಗೆ ದೂರದಿಂದ ಹಾರಿಬರುವುದೊ ಹಾಗೆಯೇ ದೂರದಿಂದ ನಿಮ್ಮ ಮೇಲೆ ಬರುವಂತೆ ಮಾಡುವರು.</verse>
				<verse number="50">ಆ ಜನಾಂಗದವರು ಕ್ರೂರಮುಖವುಳ್ಳವರು; ನೀವು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ, ಚಿಕ್ಕವರೆಂದು ಕನಿಕರಿಸುವುದಿಲ್ಲ.</verse>
				<verse number="51">ಅವರು ನಿಮ್ಮ ದನಗಳನ್ನೂ ಬೆಳೆಗಳನ್ನೂ ತಿಂದುಬಿಡುವರು. ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನಕುರಿಗಳ ಸಂತಾನವನ್ನಾಗಲಿ, ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.</verse>
				<verse number="52">ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟಿರುವ ನಾಡಿನ ಪಟ್ಟಣಗಳಿಗೆಲ್ಲಾ ಅವರು ಮುತ್ತಿಗೆ ಹಾಕುವರು; ನೀವು ನೆಚ್ಚಿಕೊಳ್ಳುವ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.</verse>
				<verse number="53">“ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಎಂಥ ಇಕ್ಕಟ್ಟಿಗೆ ಸಿಕ್ಕಿಸುವರೆಂದರೆ, ನೀವು ನಿಮ್ಮ ಸಂತಾನವನ್ನೇ, ಅಂದರೆ, ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟಿರುವ ಗಂಡುಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.</verse>
				<verse number="54">ಶತ್ರುಗಳು ನಿಮ್ಮ ಪಟ್ಟಣಗಳಿಗೆಲ್ಲಾ ಮುತ್ತಿಗೆ ಹಾಕಿ, ನಿಮ್ಮನ್ನು ಭೀಕರವಾದ ಬಿಕ್ಕಟ್ಟಿಗೆ ಸಿಕ್ಕಿಸುವರು. ಆಗ ನಿಮ್ಮಲ್ಲಿ ಮೃದುಸ್ವಭಾವಿ ಹಾಗು ಅತಿ ಸುಕುಮಾರ ಆದವನೂ ಕೂಡ ತನಗೇ ತಿನ್ನಲಿಕ್ಕೆ ಏನೂ ಉಳಿಯದೆ, ತನ್ನ ಮಕ್ಕಳ ಮಾಂಸವನ್ನು ತಾನೇ ತಿನ್ನಬೇಕೆಂದು, ಅಣ್ಣತಮ್ಮಂದಿರಿಗೂ ಪ್ರಾಣಪ್ರಿಯ ಹೆಂಡತಿಗೂ ಉಳಿದ ಮಕ್ಕಳಿಗೂ ಮೋರೆಸಿಂಡರಿಸಿಕೊಂಡು ಆ ಮಾಂಸದಲ್ಲಿ ಅವರಿಗೆ ಸ್ವಲ್ಪವನ್ನಾದರೂ ಕೊಡದೆ ಹೋಗುವನು.</verse>
				<verse number="55"></verse>
				<verse number="56">ಶತ್ರುಗಳು ನಿಮ್ಮ ಪಟ್ಟಣಗಳಿಗೆ ಮುತ್ತಿಗೆ ಹಾಕಿ ನಿಮ್ಮನ್ನು ಆ ಭೀಕರ ಇಕ್ಕಟ್ಟಿಗೆ ಸಿಕ್ಕಿಸಿದ ಕಾಲದಲ್ಲಿ ಅಂಗಾಲನ್ನೂ ನೆಲಕ್ಕೆ ಇಡದಷ್ಟು ಕೋಮಲ ಹಾಗು ಸುಕುಮಾರಿಯಾದ ಸ್ತ್ರೀ ತಿನ್ನಲಿಕ್ಕೆ ಏನೂ ಇಲ್ಲದವಳಾಗಿ, ತಾನು ಆಗಲೇ ಹೆತ್ತ ಮಗುವನ್ನೂ ಅದರ ಮೇಲಣ ಮಾಸನ್ನೂ ಗುಟ್ಟಾಗಿ ತಿನ್ನಲಾಶಿಸುವಳು; ಪ್ರಾಣಪ್ರಿಯರಾದ ಗಂಡನಿಗು, ಮಗನಿಗು, ಮಗಳಿಗು ಕೊಡಲಿಚ್ಛಿಸದೆ ಮೋರೆಯನ್ನು ಸಿಂಡರಿಸಿಕೊಳ್ಳುವಳು.</verse>
				<verse number="57"></verse>
				<verse number="58">“ಈ ಗ್ರಂಥದಲ್ಲಿ ಬರೆದಿರುವ ಧರ್ಮಶಾಸ್ತ್ರ ವಾಕ್ಯಗಳನ್ನೆಲ್ಲಾ ನೀವು ಅನುಸರಿಸಲೊಲ್ಲದೆ, ನಿಮ್ಮ ದೇವರಾದ ಸರ್ವೇಶ್ವರನೆಂಬ ಮಹಾಮಹಿಮೆಯುಳ್ಳ ಪೂಜ್ಯನಾಮದಲ್ಲಿ ನೀವು ಭಯಭಕ್ತಿಯುಳ್ಳವರಾಗಿರದೇ ಹೋದರೆ</verse>
				<verse number="59">ಅವರು ನಿಮಗೂ ನಿಮ್ಮ ಸಂತತಿಯವರಿಗೂ ದೀರ್ಘಕಾಲವಿರುವ ಬಹುಭಯಂಕರವಾದ ಉಪದ್ರವಗಳನ್ನು ಬರಮಾಡುವರು. ದೀರ್ಘಕಾಲ ವಾಸಿಯಾಗದ ಘೋರವ್ಯಾಧಿಗಳಿಂದ ನಿಮ್ಮನ್ನು ಬಾಧಿಸುವರು.</verse>
				<verse number="60">ನೀವು ಅಂಜಿಕೊಳ್ಳುತ್ತಿದ್ದ ಈಜಿಪ್ಟ್ ದೇಶದ ರೋಗಗಳನ್ನೆಲ್ಲ ಮತ್ತೆ ನಿಮ್ಮ ಮೇಲೆ ಬರಮಾಡುವರು; ಅವು ನಿಮಗೆ ಅಂಟಿಕೊಂಡೇ ಇರುವುವು.</verse>
				<verse number="61">ಇಷ್ಟುಮಾತ್ರವಲ್ಲದೆ, ಈ ಧರ್ಮಶಾಸ್ತ್ರಗ್ರಂಥದಲ್ಲಿ ಬರೆಯದೆ ಇರುವ ವಿಧವಿಧವಾದ ರೋಗಗಳನ್ನೂ ವ್ಯಾಧಿಗಳನ್ನೂ ನಿಮ್ಮ ಮೇಲೆ ಬರಮಾಡಿ ನಿಮ್ಮನ್ನು ನಾಶಮಾಡುವರು.</verse>
				<verse number="62">ನಕ್ಷತ್ರಗಳಷ್ಟು ಅಸಂಖ್ಯರಾಗಿರುವ ನೀವು, ನಿಮ್ಮ ದೇವರಾದ ಸರ್ವೇಶ್ವರನ ಮಾತಿನಲ್ಲಿ ಲಕ್ಷ್ಯವಿಡದೆ ಹೋದುದರಿಂದ ಸ್ವಲ್ಪ ಮಂದಿಯೇ ಉಳಿಯುವಿರಿ.</verse>
				<verse number="63">ಸರ್ವೇಶ್ವರ ಈಗ ನಿಮ್ಮನ್ನು ಅಭಿವೃದ್ಧಿಪಡಿಸುವುದರಲ್ಲೂ ಹೆಚ್ಚಿಸುವುದರಲ್ಲೂ ಹೇಗೆ ಸಂತೋಷಪಡುತ್ತಾರೋ ಹಾಗೆಯೇ ಆಗ ನಿಮ್ಮನ್ನು ಕೆಡಿಸಿ ನಾಶಮಾಡುವುದರಲ್ಲಿ ಸಂತೋಷಪಡುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿನೊಳಗಿಂದ ನಿಮ್ಮನ್ನು ಕಿತ್ತುಹಾಕುವರು.</verse>
				<verse number="64">“ಭೂಮಂಡಲದ ಚತುರ್ದಿಕ್ಕುಗಳಲ್ಲಿರುವ ಎಲ್ಲ ಜನಾಂಗಗಳಲ್ಲಿಯೂ ಸರ್ವೇಶ್ವರ ನಿಮ್ಮನ್ನು ಚದುರಿಸುವರು; ಅಲ್ಲಿ ನಿಮಗಾಗಲಿ ನಿಮ್ಮ ಪಿತೃಗಳಿಗಾಗಲಿ ಗೊತ್ತಿಲ್ಲದ ಮರದ ದೇವರುಗಳನ್ನೂ ಕಲ್ಲಿನ ದೇವರುಗಳನ್ನೂ ಪೂಜಿಸುವಿರಿ.</verse>
				<verse number="65">ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ. ಸ್ವಂತದ್ದು ಎಂದು ಹೇಳಿಕೊಳ್ಳಲು ಅಂಬೆಗಾಲಿಡುವಷ್ಟು ಸ್ಥಳಸಿಕ್ಕುವುದಿಲ್ಲ. ನೀವು ಗಡಗಡನೆ ನಡುಗುವ ಹೃದಯವುಳ್ಳವರಾಗಿ, ದಿಕ್ಕುತೋರದೆ ಕಂಗೆಟ್ಟವರಾಗಿ ಹಾಗು ಮನಗುಂದಿದವರಾಗಿ ಇರುವಂತೆ ಸರ್ವೇಶ್ವರ ಮಾಡುವರು.</verse>
				<verse number="66">ಬದುಕುವೆವೋ ಇಲ್ಲವೋ ಎಂಬುದಾಗಿ ಅನುಮಾನಪಟ್ಟು ನೀವು ಹಗಲಿರುಳು ಪ್ರಾಣಭಯದಲ್ಲಿರುವಿರಿ; ಪ್ರಾಣದ ಮೇಲಣ ನಂಬಿಕೆಯನ್ನು ಬಿಟ್ಟೇಬಿಡುವಿರಿ.</verse>
				<verse number="67">ಮನಸ್ಸಿನಲ್ಲಿ ನಿರಂತರ ಪ್ರಾಣಭಯವಿರುವುದರಿಂದ ಹಾಗು ಕಣ್ಣಿನಿಂದ ಭಯಂಕರವಾದ ಸಂಗತಿಗಳನ್ನು ನೋಡುವುದರಿಂದ ನೀವು ಹೊತ್ತಾರೆಯಲ್ಲೇ, ‘ಅಯ್ಯೋ, ಅಯ್ಯೋ, ಸಾಯಂಕಾಲ ಯಾವಾಗ ಬರುವುದೋ?’ ಎಂದೂ ಸಾಯಂಕಾಲದಲ್ಲಿ, ‘ಅಯ್ಯೋ, ಅಯ್ಯೋ, ಮರುದಿನ ಯಾವಾಗ ಬರುವುದೋ?’ ಎಂದೂ ಕೊರಗುವಿರಿ.</verse>
				<verse number="68">ನೀವು ಈಜಿಪ್ಟ್ ದೇಶವನ್ನು ಮರಳಿ ಎಂದಿಗೂ ನೋಡುವುದಿಲ್ಲವೆಂದು ಸರ್ವೇಶ್ವರ ಹೇಳಿದ್ದರೂ ಅವರು ನಿಮ್ಮನ್ನು ಹಡಗುಗಳನ್ನೇರಿಸಿ ಅಲ್ಲಿಗೆ ತಿರುಗಿ ಹೋಗಮಾಡುವರು. ಅಲ್ಲಿ ನೀವು ಶತ್ರುಗಳಿಗೆ ನಿಮ್ಮನ್ನೇ ಗಂಡು ಹೆಣ್ಣು ಎನ್ನದೆ ಗುಲಾಮರನ್ನಾಗಿ ಮಾರಿಕೊಳ್ಳಬೇಕೆಂದು ಅಪೇಕ್ಷಿಸಿದರೂ ಯಾರೂ ನಿಮ್ಮನ್ನು ಕೊಂಡುಕೊಳ್ಳುವುದಿಲ್ಲ.”</verse>
			</chapter>
			<chapter number="29">
				<verse number="1">ಸರ್ವೇಶ್ವರಸ್ವಾಮಿ ಹೋರೇಬಿನಲ್ಲಿ ಇಸ್ರಯೇಲರೊಡನೆ ಮಾಡಿದ ಒಡಂಬಡಿಕೆ ಅಲ್ಲದೆ ಅವರು ಮೋವಾಬ್ ನಾಡಿನಲ್ಲಿ ಅವರೊಡನೆ ಮಾಡಬೇಕೆಂದು ಮೋಶೆಗೆ ಆಜ್ಞಾಪಿಸಿದ ಒಡಂಬಡಿಕೆಯ ವಚನಗಳು ಇವು:</verse>
				<verse number="2">ಮೋಶೆ ಇಸ್ರಯೇಲರೆಲ್ಲರನ್ನು ಕರೆದು ಹೀಗೆಂದನು, “ಸರ್ವೇಶ್ವರ ಈಜಿಪ್ಟ್ ದೇಶದಲ್ಲಿ ನಿಮ್ಮ ಕಣ್ಣಮುಂದೆ ಫರೋಹನಿಗೂ ಅವನ ಪರಿವಾರದವರಿಗೂ</verse>
				<verse number="3">ಅವನ ಇಡೀ ನಾಡಿಗೂ ಮಾಡಿದವುಗಳನ್ನೆಲ್ಲಾ ನೀವು ನೋಡಿದ್ದೀರಿ. ಮಹಾಪರಿಶೋಧನೆ, ಪವಾಡ, ಮಹತ್ಕಾರ್ಯ ಇವುಗಳನ್ನು ಕಣ್ಣಾರೆ ನೋಡಿದ್ದೀರಿ.</verse>
				<verse number="4">ಆದರೂ ಗ್ರಹಿಸುವ ಬುದ್ಧಿ, ನೋಡುವ ಕಣ್ಣು, ಕೇಳುವ ಕಿವಿ ಇವುಗಳನ್ನು ಸರ್ವೇಶ್ವರ ಇಂದಿನವರೆಗೂ ಅಯ್ಯೋ ನಿಮಗೆ ಅನುಗ್ರಹಿಸಲಿಲ್ಲ!</verse>
				<verse number="5">ನಲವತ್ತು ವರ್ಷ ನಾನು ನಿಮ್ಮನ್ನು ಮರುಭೂಮಿಯಲ್ಲಿ ನಡೆಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪಾಗಲಿ, ಕಾಲಲ್ಲಿದ್ದ ಕೆರವಾಗಲಿ ಸವೆದುಹೋಗಲಿಲ್ಲ.</verse>
				<verse number="6">ನೀವು ರೊಟ್ಟಿ ತಿನ್ನಲಿಲ್ಲ; ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಸರ್ವೇಶ್ವರನೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.</verse>
				<verse number="7">ನೀವು ಈ ಸ್ಥಳಕ್ಕೆ ಬಂದಾಗ ಹೆಷ್ಬೋನಿನ ಅರಸ ಸೀಹೋನನೂ ಬಾಷಾನಿನ ಅರಸ ಓಗನೂ ನಮ್ಮೊಡನೆ ಯುದ್ಧಮಾಡುವುದಕ್ಕೆ ಬಂದರು.</verse>
				<verse number="8">ನಾವು ಅವರನ್ನು ಸೋಲಿಸಿ ಅವರ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಕುಲದವರಲ್ಲಿ ಅರ್ಧಜನರಿಗೂ ಸೊತ್ತಾಗಿ ಕೊಟ್ಟೆವಷ್ಟೆ.</verse>
				<verse number="9">ಈ ಸಂಗತಿಗಳನ್ನೆಲ್ಲಾ ನೀವು ಜ್ಞಾಪಕಮಾಡಿಕೊಂಡು ಈ ಒಡಂಬಡಿಕೆಯ ವಾಕ್ಯಗಳನ್ನು ಅನುಸರಿಸಿ ನಡೆಯಬೇಕು; ಆಗ ನೀವು ನಡೆಸುವ ಕೆಲಸಕಾರ್ಯಗಳಲ್ಲಿ ಜಾಣರಾಗಿ ಅಭಿವೃದ್ಧಿ ಹೊಂದುವಿರಿ.</verse>
				<verse number="10">“ಇಸ್ರಯೇಲ ಜನರೇ, ನಿಮ್ಮ ಮುಖ್ಯಸ್ಥರು,</verse>
				<verse number="11">ಗೋತ್ರದವರು, ಹಿರಿಯರು, ಅಧಿಕಾರಿಗಳು, ಹೆಂಗಸರು, ಮಕ್ಕಳು ನಿಮ್ಮ ಪಾಳೆಯದಲ್ಲಿ ಇರುವ ಅನ್ಯರಾದ ಕಟ್ಟಿಗೆಯವರು, ನೀರಿನವರು ಮುಂತಾದ ಆಳುಗಳು,</verse>
				<verse number="12">ನೀವೆಲ್ಲರೂ ಈ ದಿನ ನಿಮ್ಮ ದೇವರಾದ ಸರ್ವೆಶ್ವರನ ಸನ್ನಿಧಿಯಲ್ಲಿ ನಿಂತಿರುವುದಕ್ಕೆ ಕಾರಣವೇನೆಂದರೆ - ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಹೇಳಿದಂತೆ ಹಾಗು ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ವಾಗ್ದಾನಮಾಡಿದಂತೆ ನಿಮ್ಮನ್ನು ತಮಗೆ ಸ್ವಕೀಯ ಜನರನ್ನಾಗಿಯೂ ತಮ್ಮನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುವುದಕ್ಕಾಗಿ ಈಗ ನಿಮ್ಮೊಡನೆ ಪ್ರಮಾಣಪೂರ್ವಕವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳಬೇಕೆಂದಿದ್ದಾರೆ; ನೀವು ಅದಕ್ಕೆ ಸೇರಲು ಕೂಡಿಬಂದಿದ್ದೀರಿ.</verse>
				<verse number="13"></verse>
				<verse number="14">“ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಿದ್ಧರಾಗಿ ನಿಂತಿರುವ ನಮ್ಮೊಡನೆ ಮಾತ್ರವಲ್ಲದೆ, ಮುಂದೆ ಹುಟ್ಟುವ ನಮ್ಮ ಸಂತತಿಯವರೊಡನೆಯೂ ಪ್ರಮಾಣಪೂರ್ವಕವಾದ ಈ ಒಡಂಬಡಿಕೆಯನ್ನು ಮಾಡಿಕೊಳ್ಳಬೇಕೆಂದಿದ್ದಾರೆ.</verse>
				<verse number="15"></verse>
				<verse number="16">ನಾವು ಈಜಿಪ್ಟ್ ದೇಶದಲ್ಲಿ ವಾಸಮಾಡಿದ್ದು, ಅನೇಕ ಜನಾಂಗಗಳ ಪ್ರದೇಶಗಳನ್ನು ದಾಟಿಬಂದದ್ದು ನಿಮಗೆ ತಿಳಿದೇ ಇದೆ.</verse>
				<verse number="17">ಆ ಜನಾಂಗಗಳಲ್ಲಿ ನಡೆಯುವ ಹೇಯಾಚಾರಗಳನ್ನೂ ಅವರು ಮರ, ಕಲ್ಲು, ಬೆಳ್ಳಿ, ಬಂಗಾರಗಳಿಂದ ಮಾಡಿಕೊಂಡು ಪೂಜಿಸುವ ಬೊಂಬೆಗಳನ್ನೂ ನೀವು ಖಂಡಿತವಾಗಿ ನೋಡಿದ್ದೀರಿ.</verse>
				<verse number="18">“ಎಚ್ಚರಿಕೆಯಿಂದಿರಿ! ನಮ್ಮ ದೇವರಾದ ಸರ್ವೇಶ್ವರನನ್ನು ಬಿಟ್ಟು, ಆ ಜನಾಂಗಗಳ ದೇವರುಗಳನ್ನು ಅವಲಂಬಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಪುರುಷರಾಗಲಿ ನಿಮ್ಮಲ್ಲಿ ಇರಲೇಬಾರದು; ನಿಮ್ಮಲ್ಲಿ ಯಾವ ವಿಷಲತೆಯ ಬೇರೂ ಇರಬಾರದು.</verse>
				<verse number="19">ಶಾಪದಿಂದ ಕೂಡಿರುವ ಈ ಪ್ರತಿಜ್ಞೆಯನ್ನು ಕೇಳಿದ ಯಾವನಾದರು ತನ್ನೊಳಗೆ, ‘ನಾನು ಹಟಹಿಡಿದು ಅವಿಧೇಯನಾದರೂ ನನಗೆ ಕ್ಷೇ‍ಮವಾಗಿಯೇ ಇರುವುದು’ ಎಂದುಕೊಂಡು ಹಿಗ್ಗಬಾರದು. ಹಾಗೆ ಮಾಡುವವನು ದೋಷಿಗಳಿಗೂ ನಿರ್ದೋಷಿಗಳಿಗೂ ನಾಶವನ್ನುಂಟು ಮಾಡುವನು.</verse>
				<verse number="20">ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.</verse>
				<verse number="21">ಈ ಧರ್ಮಶಾಸ್ತ್ರದಲ್ಲಿ ಬರೆದಿರುವ ನಿಬಂಧನೆಯನ್ನು ಮೀರುವವರಿಗೆ ಉಂಟಾಗುವ ಶಾಪಗಳು ಅವನಲ್ಲಿ ನೆರವೇರಲೆಂದು ಸರ್ವೇಶ್ವರ ಅವನನ್ನು ಇಸ್ರಯೇಲರ ಎಲ್ಲ ಕುಲಗಳಿಂದ ಪ್ರತ್ಯೇಕಿಸಿ, ದಂಡಿಸುವರು.</verse>
				<verse number="22">“ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ನಾಡಿಗೆ ಸರ್ವೇಶ್ವರ ಉಂಟುಮಾಡಿದ ರೋಗೋಪದ್ರವಗಳನ್ನು ಕಂಡು ಆಶ್ಚರ್ಯಪಡುವರು.</verse>
				<verse number="23">ಎಲ್ಲ ಜನಾಂಗಗಳವರೂ ನಿಮ್ಮ ಆ ನಾಡು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ನೋಡುವರು. ಸರ್ವೇಶ್ವರ ಮಹಾಕೋಪದಿಂದ ಕೆಡವಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋಗಿರುವುದನ್ನೂ ಎಲ್ಲ ಕಡೆಗಳಲ್ಲೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನೂ ನೋಡುವರು.</verse>
				<verse number="24">‘ಸರ್ವೇಶ್ವರ ಈ ನಾಡಿಗೆ ಹೀಗೆ ಮಾಡಿದ್ದೇಕೆ? ಇಂಥ ಕೋಪಾಗ್ನಿಗೆ ಕಾರಣ ಏನಿರಬಹುದು?’ ಎಂದು ವಿಚಾರಿಸುವರು.</verse>
				<verse number="25">ಅದಕ್ಕೆ ಜನರು, ‘ಈ ನಾಡಿನವರ ಪಿತೃಗಳ ದೇವರಾದ ಸರ್ವೇಶ್ವರ ಅವರನ್ನು ಈಜಿಪ್ಟ್ ದೇಶದಿಂದ ಬಿಡಿಸಿ ಅವರೊಡನೆ ಮಾಡಿದ ಒಡಂಬಡಿಕೆಯನ್ನು ಅವರು ಉಲ್ಲಂಘಿಸಿದರು.</verse>
				<verse number="26">ತಮಗೆ ನೇಮಕವಾಗದಿದ್ದ ಹಾಗು ಗೊತ್ತಿಲ್ಲದಿದ್ದ ಇತರ ದೇವರುಗಳನ್ನು ಅವಲಂಬಿಸಿ ಪೂಜಿಸಿದರು.</verse>
				<verse number="27">ಆದುದರಿಂದ ಸರ್ವೇಶ್ವರ ಅವರ ನಾಡಿನ ಮೇಲೆ ಕೋಪಗೊಂಡು ಈ ಗ್ರಂಥದಲ್ಲಿ ಬರೆದಿರುವ ಶಾಪಗಳನ್ನು ಅವರ ಮೇಲೆ ಬರಮಾಡಿದ್ದಾರೆ;</verse>
				<verse number="28">ಮಹಾಕೋಪೋದ್ರೇಕದಿಂದ ಆ ಜನರನ್ನು ನಾಡಿನಿಂದ ಕಿತ್ತುಹಾಕಿ ಈಗ ಅನುಭವಕ್ಕೆ ಬಂದಿರುವಂತೆ ದೇಶಾಂತರ ಅಟ್ಟಿಬಿಟ್ಟಿ ಇದ್ದಾರೆ’ ಎಂದು ಉತ್ತರಕೊಡುವರು.</verse>
				<verse number="29">“ರಹಸ್ಯವಾದವುಗಳು ನಮ್ಮ ದೇವರಾದ ಸರ್ವೇಶ್ವರನಿಗೆ ಸೇರಿದವು. ಆದರೆ ಅವರಿಂದ ಪ್ರಕಟವಾದವುಗಳು ಸದಾ ನಮ್ಮ ಮತ್ತು ನಮ್ಮ ಸಂತತಿಯವರ ಪಾಲಾಗಿರುವುವು; ಆದುದರಿಂದ ನಾವು ಈ ಧರ್ಮಶಾಸ್ತ್ರನಿಯಮಗಳನ್ನು ಅನುಸರಿಸಿ ನಡೆಯಬೇಕಾದ ಹಂಗಿನಲ್ಲಿದ್ದೇವೆ.</verse>
			</chapter>
			<chapter number="30">
				<verse number="1">“ನಾನು ನಿಮ್ಮ ಮುಂದೆ ಇಟ್ಟಿರುವ ಆಶೀರ್ವಾದ ಹಾಗು ಶಾಪ ನಿಮ್ಮ ಅನುಭವಕ್ಕೆ ಬರುವುವು; ಆಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಚದುರಿಸಿರುವ ದೇಶಗಳಲ್ಲಿ ನೀವು ಇವುಗಳನ್ನು ನೆನಪಿಗೆ ತಂದುಕೊಳ್ಳಬೇಕು.</verse>
				<verse number="2">ನಿಮ್ಮ ಮಕ್ಕಳು ಸಹಿತವಾಗಿ ನಿಮ್ಮ ದೇವರಾದ ಸರ್ವೇಶ್ವರನ ಆಶ್ರಯಕ್ಕೆ ಮರಳಿಬಂದು ನಾನು ಈಗ ನಿಮಗೆ ಬೋಧಿಸುವ ಅವರ ಮಾತುಗಳಿಗೆ ಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ವಿಧೇಯರಾಗಬೇಕು;</verse>
				<verse number="3">ಆಗ, ನಿಮ್ಮ ದೇವರಾದ ಸರ್ವೇಶ್ವರ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ನಿಮ್ಮನ್ನು ಚದುರಿಸಿದ ಎಲ್ಲ ದೇಶಗಳಿಂದ ಮತ್ತೆ ಕೂಡಿಸುವರು.</verse>
				<verse number="4">ನಿಮ್ಮಲ್ಲಿ ಯಾರಾದರು ಭೂಲೋಕದ ಕಟ್ಟಕಡೆಯವರೆಗೆ ಒಯ್ಯಲ್ಪಟ್ಟಿದ್ದರೂ ಅಲ್ಲಿಂದ ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ಕರೆದುತರುವರು.</verse>
				<verse number="5">ನಿಮ್ಮ ಪಿತೃಗಳಿಗೆ ಸ್ವಂತವಾಗಿದ್ದ ನಾಡಿನಲ್ಲಿ ಸೇರಿಸುವರು. ಅದು ನಿಮಗೂ ಸ್ವದೇಶವಾಗುವಂತೆ ಮಾಡಿ ನಿಮಗೆ ಒಳಿತನ್ನುಂಟುಮಾಡುವರು; ಪಿತೃಗಳಿಗಿಂತಲೂ ಅಧಿಕವಾಗಿ ನಿಮ್ಮನ್ನು ಹೆಚ್ಚಿಸುವರು.</verse>
				<verse number="6">ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮತ್ತು ನಿಮ್ಮ ಸಂತತಿಯವರ ಅಂತರಂಗಕ್ಕೇ ಸುನ್ನತಿ ಮಾಡುವರು. ಆಗ ನೀವು ಅವರನ್ನು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ಪ್ರೀತಿಸಿ ಬದುಕಿಬಾಳುವಿರಿ.</verse>
				<verse number="7">ನಿಮ್ಮ ದೇವರಾದಸರ್ವೇಶ್ವರ ಆ ಶಾಪಗಳನ್ನೆಲ್ಲಾ ನಿಮ್ಮನ್ನು ದ್ವೇಷಿಸಿ, ಹಿಂಸಿಸಿದ ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವರು.</verse>
				<verse number="8">ನೀವಾದರೋ ಸರ್ವೇಶ್ವರನ ಮಾತಿಗೆ ಪುನಃ ವಿಧೇಯರಾಗಿ, ನಾನು ಈಗ ನಿಮಗೆ ಬೋಧಿಸುವ ಅವರ ಆಜ್ಞೆಗಳಂತೆ ನಡೆಯುವಿರಿ;</verse>
				<verse number="9">ಮತ್ತು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂತಾನ, ಪಶು ಹಾಗು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ, ನಿಮಗೆ ಒಳಿತನ್ನುಂಟುಮಾಡುವರು. ನೀವು ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಪೂರ್ಣಹೃದಯದಿಂದಲೂ ಮನಸ್ಸಿನಿಂದಲೂ ಅವರ ಕಡೆಗೆ ತಿರುಗಿಕೊಳ್ಳುವಿರಿ. ಅವರು ನಿಮ್ಮ ಪಿತೃಗಳ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲೂ ಮತ್ತೆ ಸಂತೋಷಪಟ್ಟು ನಿಮಗೆ ಒಳಿತನ್ನುಂಟುಮಾಡುವರು.</verse>
				<verse number="10"></verse>
				<verse number="11">“ನಾನು ಈಗ ನಿಮಗೆ ಬೋಧಿಸಿದ ಧರ್ಮೋಪದೇಶ ನಿಮಗೆ ಗ್ರಹಿಸುವುದಕ್ಕೆ ಕಷ್ಟ ಆದುದಲ್ಲ, ಸಾಧಿಸುವುದಕ್ಕೆ ಅಸಾಧ್ಯವಾದದ್ದೂ ಅಲ್ಲ.</verse>
				<verse number="12">ಇದು ಮೇಲಣ ಲೋಕದಲ್ಲಿರುವ ಮಾತಲ್ಲ, ‘ನಮಗಾಗಿ ಮೇಲಣ ಲೋಕವನ್ನು ಏರಿ ಅದನ್ನು ತಿಳಿದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದಿದ್ದರೆ ನಾವು ಕೈಗೊಳ್ಳುತ್ತಿದ್ದೆವು’ ಎಂದುಕೊಳ್ಳುವುದಕ್ಕೆ ಅವಕಾಶವೇನೂ ಇಲ್ಲ.</verse>
				<verse number="13">ಇದು ಸಮುದ್ರದ ಆಚೆ ಇರುವ ಮಾತಲ್ಲ; ‘ನಮಗಾಗಿ ಸಮುದ್ರವನ್ನು ದಾಟಿ ಅದನ್ನು ತೆಗೆದುಕೊಂಡು ಬಂದು ನಮಗೆ ತಿಳಿಸುವಷ್ಟು ಶಕ್ತರು ಯಾರಿದ್ದಾರೆ? ಇದ್ದಿದ್ದರೆ ನಾವು ಕೈಗೊಳ್ಳುತ್ತಿದ್ದೆವು’ ಎಂದುಕೊಳ್ಳುವುದಕ್ಕೆ ಆಸ್ಪದವೇನೂ ಇಲ್ಲ.</verse>
				<verse number="14">ಅನುಸರಿಸುವುದಕ್ಕೆ ಸಾಧ್ಯವಾಗುವಂತೆ ಈ ವಾಕ್ಯ ನಿಮಗೆ ಸಮೀಪದಲ್ಲಿ ಇದೆ; ಇದು ನಿಮ್ಮ ಬಾಯಲ್ಲೇ ಇದೆ; ಹೃದಯದಲ್ಲೇ ಇದೆ.</verse>
				<verse number="15">“ಇಗೋ ನೋಡಿ: ನಾನು ಶುಭವನ್ನೂ ಅಶುಭವನ್ನೂ ಜೀವವನ್ನೂ ಸಾವನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ.</verse>
				<verse number="16">ನಾನು ಈಗ ನಿಮಗೆ ಬೋಧಿಸುವಂತೆ ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ, ಅವರು ಹೇಳಿದ ಮಾರ್ಗದಲ್ಲಿ ನಡೆದು, ಅವರ ಆಜ್ಞಾವಿಧಿನಿರ್ಣಯಗಳನ್ನು ಅನುಸರಿಸಿದರೆ ನೀವು ಬದುಕಿಬಾಳುವಿರಿ, ಅಭಿವೃದ್ಧಿಯಾಗುವಿರಿ, ಮತ್ತು ನೀವು ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಆಶೀರ್ವದಿಸುವರು.</verse>
				<verse number="17">ಆದರೆ ನೀವು ಅವರನ್ನು ಬಿಟ್ಟು, ಅವರ ಮಾತನ್ನು ಕೇಳಲೊಲ್ಲದೆ, ಮೋಸಹೋಗಿ,</verse>
				<verse number="18">ಇತರ ದೇವರುಗಳನ್ನು ಪೂಜಿಸಿ ಅವಲಂಭಿಸಿದರೆ ನೀವು ಸ್ವಾಧೀನಮಾಡಿಕೊಳ್ಳಲು ಜೋರ್ಡನ್ ನದಿಯನ್ನು ದಾಟಿಹೋಗುವ ನಾಡಿನಲ್ಲಿ ಬಹುಕಾಲ ಇರದೆ ನಾಶ ಆಗಿ ಹೋಗುವಿರಿ. ಇದನ್ನು ನಾನು ಈಗ ನಿಮಗೆ ಖಂಡಿತವಾಗಿ ತಿಳಿಸುತ್ತೇನೆ.</verse>
				<verse number="19">ನಾನು ಸಾವುಜೀವಗಳನ್ನೂ ಶಾಪಾಶೀರ್ವಾದಗಳನ್ನೂ ಈಗ ನಿಮ್ಮ ಮುಂದೆ ಇಟ್ಟಿದ್ದೇನೆ; ಇದಕ್ಕೆ ಭೂಮಿ ಆಕಾಶಗಳೇ ಸಾಕ್ಷಿಗಳಾಗಿರಲಿ; ಆದುದರಿಂದ ನೀವೂ ನಿಮ್ಮ ಸಂತತಿಯವರೂ ಬದುಕಿಬಾಳುವಂತೆ ಜೀವವನ್ನೇ ಆರಿಸಿಕೊಳ್ಳಿ;</verse>
				<verse number="20">ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾತಿಗೆ ವಿಧೇಯರಾಗಿರಿ; ಅವರನ್ನು ಹೊಂದಿಕೊಂಡೇ ಇರಿ. ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಕೊಟ್ಟ ನಾಡಿನಲ್ಲಿ ನೀವು ಬದುಕಿ ಬಾಳುವುದಕ್ಕೂ ಬಹುಕಾಲ ಇರುವುದಕ್ಕೂ ಅವರೇ ಆಧಾರ.”</verse>
			</chapter>
			<chapter number="31">
				<verse number="1">ಮೋಶೆ ಹೋಗಿ ಇಸ್ರಯೇಲರೆಲ್ಲರಿಗೆ ಈ ಮಾತುಗಳನ್ನು ತಿಳಿಸಿದನು:</verse>
				<verse number="2">“ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ; ವಿಶೇಷವಾದ ಕಾರ್ಯಗಳನ್ನು ನಿರ್ವಹಿಸುವುದು ಇನ್ನು ನನ್ನಿಂದಾಗದು; ಸರ್ವೇಶ್ವರ ನನಗೆ, ‘ನೀನು ಈ ಜೋರ್ಡನ್ ನದಿಯನ್ನು ದಾಟಕೂಡದು’ ಎಂದು ಆಜ್ಞಾಪಿಸಿದ್ದಾರೆ.</verse>
				<verse number="3">ನಿಮ್ಮ ದೇವರಾದ ಸರ್ವೇಶ್ವರ ತಾವೇ ನಿಮ್ಮ ಸೇನಾ ನಾಯಕರಾಗಿ ನದಿಯನ್ನು ದಾಟಿಹೋಗುವರು; ಅವರು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವರು. ಆಗ ನೀವು ಅವರ ನಾಡನ್ನು ಸ್ವಾಧೀನಮಾಡಿಕೊಳ್ಳುವಿರಿ. ಸರ್ವೇಶ್ವರ ಆಜ್ಞಾಪಿಸಿದಂತೆ ಯೆಹೋಶುವನು ಕೂಡ ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.</verse>
				<verse number="4">ಸರ್ವೇಶ್ವರ, ಅಮೋರಿಯರ ಅರಸರಾದ ಸೀಹೋನ್ ಹಾಗು ಓಗರನ್ನು ನಾಶಮಾಡಿ ಅವರ ದೇಶವನ್ನು ನಿಮಗೆ ಸ್ವಾಧೀನಪಡಿಸಿದಂತೆ ಆ ಜನಾಂಗಗಳನ್ನೂ ನಾಶಮಾಡಿ ಅವರ ದೇಶವನ್ನು ನಿಮಗೆ ವಶಪಡಿಸುವರು.</verse>
				<verse number="5">ಸರ್ವೇಶ್ವರ ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು.</verse>
				<verse number="6">ನೀವು ಶೂರರಾಗಿ ಧೈರ್ಯದಿಂದಿರಿ; ಅವರಿಗೆ ಅಂಜಬೇಡಿ, ಕಳವಳಪಡಬೇಡಿ. ನಿಮ್ಮ ದೇವರಾದ ಸರ್ವೇಶ್ವರನೇ ನಿಮ್ಮ ಸಂಗಡ ಇರುತ್ತಾರೆ; ಅವರು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ,” ಎಂದು ಹೇಳಿದನು.</verse>
				<verse number="7">ಅನಂತರ ಮೋಶೆ ಯೆಹೋಶುವನನ್ನು ಕರೆದು ಇಸ್ರಯೇಲರೆಲ್ಲರ ಮುಂದೆ, “ಸರ್ವೇಶ್ವರ ಇವರ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿರು, ಧೈರ್ಯದಿಂದಿರು;</verse>
				<verse number="8">ಸರ್ವೇಶ್ವರ ತಾವೇ ನಿನ್ನ ಮುಂದುಗಡೆ ಹೋಗುವರು; ಅವರೇ ನಿನ್ನ ಸಂಗಡ ಇರುವರು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ. ಅಂಜಬೇಡ; ಧೈರ್ಯದಿಂದಿರು,” ಎಂದು ಹೇಳಿದನು.</verse>
				<verse number="9">ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಸರ್ವೇಶ್ವರನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಹಿರಿಯರ ವಶಕ್ಕೆ ಕೊಟ್ಟನು.</verse>
				<verse number="10">ಅವರಿಗೆ, “ಪ್ರತಿ ಏಳು ವರ್ಷಗಳು ಪೂರ್ತಿಯಾದಾಗ, ಬಿಡುಗಡೆಯ ಸಂವತ್ಸರದ ನೇಮಕ ಕಾಲದಲ್ಲಿ ಅಂದರೆ, ಪರ್ಣಕುಟೀರ ಜಾತ್ರೆಯಲ್ಲಿ</verse>
				<verse number="11">ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಂಡ ಸ್ಥಳದಲ್ಲಿ, ಇಸ್ರಯೇಲರೆಲ್ಲರು ಅವರ ಸನ್ನಿಧಿಗೆ ಕೂಡಿಬಂದಾಗ ಅವರೆಲ್ಲರಿಗೂ ಕೇಳಿಸುವಂತೆ ನೀವು ಈ ಧರ್ಮಶಾಸ್ತ್ರವನ್ನು ಅವರ ಮುಂದೆ ಓದಬೇಕು.</verse>
				<verse number="12">ಜನರೆಲ್ಲರು ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀ ಪುರುಷರನ್ನೂ ಮಕ್ಕಳನ್ನೂ ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗುವರು. ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.</verse>
				<verse number="13">ಸರ್ವೇಶ್ವರನ ಮಹತ್ಕಾರ್ಯಗಳನ್ನು ನೋಡದಿರುವ ನಿಮ್ಮ ಸಂತತಿಯವರು ಸಹ ಇವನ್ನು ಕೇಳಿ, ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನ ಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ವಾಸವಾಗಿರುವವರೆಗೂ, ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಲು ಕಲಿತುಕೊಳ್ಳುವರು,” ಎಂದು ಹೇಳಿದನು.</verse>
				<verse number="14">ಸರ್ವೇಶ್ವರ ಸ್ವಾಮಿ, ಮೋಶೆಗೆ, “ನಿನ್ನ ಮರಣದ ಕಾಲ ಸಮೀಪವಾಯಿತು; ಆದಕಾರಣ ನೀನು ಯೆಹೋಶುವನನ್ನು ಕರೆದುಕೊಂಡು ಬಂದು, ದೇವದರ್ಶನದ ಗುಡಾರದೊಳಗೆ ನನ್ನ ಸನ್ನಿಧಿಯಲ್ಲಿ ನಿಲ್ಲಬೇಕು; ಆಗ ನಾನು ಅವನಿಗೆ ಅಧಿಕಾರವನ್ನು ಕೊಡುವೆನು,” ಎಂದು ಆಜ್ಞಾಪಿಸಿದರು. ಮೋಶೆಯೂ ಯೆಹೋಶುವನೂ ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿ ಬಂದು ನಿಂತುಕೊಂಡರು.</verse>
				<verse number="15">ಅಲ್ಲಿ ಸರ್ವೇಶ್ವರ ಮೇಘಸ್ತಂಭದಲ್ಲಿ ಕಾಣಿಸಿದರು; ಆ ಮೇಘಸ್ತಂಭವು ಗುಡಾರದ ಬಾಗಿಲಿನ ಬಳಿಯಲ್ಲಿ ನಿಂತಿತು.</verse>
				<verse number="16">ಸರ್ವೇಶ್ವರ ಮೋಶೆಗೆ, “ನೀನು ಮೃತನಾಗಿ ಪಿತೃಗಳಲ್ಲಿಗೆ ಸೇರಿದ ಮೇಲೆ ಈ ಜನರು ನನ್ನನ್ನು ಬಿಟ್ಟು, ನಾನು ಅವರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿ, ದೇವದ್ರೋಹಿಗಳಾಗಿ ತಾವು ಹೋಗುವ ನಾಡಿನಲ್ಲಿರುವ ಅನ್ಯದೇವತೆಗಳನ್ನು ಪೂಜಿಸುವರು.</verse>
				<verse number="17">ಆಗ ನಾನು ಅವರ ಮೇಲೆ ಬಹಳ ಸಿಟ್ಟುಗೊಂಡು, ಅವರನ್ನು ಬಿಟ್ಟು, ಅವರಿಗೆ ವಿಮುಖನಾಗುವೆನು. ಆದುದರಿಂದ ಅವರು ಸಂಹಾರಕ್ಕೆ ಗುರಿಯಾಗುವರು; ಅನೇಕ ಕಷ್ಟಗಳೂ ವಿಪತ್ತುಗಳೂ ಅವರಿಗೆ ಒದಗುವುವು. ಆಗ ಅವರು, ‘ನಮ್ಮ ದೇವರು, ನಮ್ಮ ಮಧ್ಯೆ ಇಲ್ಲದೆ ಹೋದುದರಿಂದಲೇ ಈ ವಿಪತ್ತುಗಳೆಲ್ಲಾ ನಮಗೆ ಸಂಭವಿಸಿವೆ,’ ಎಂದುಕೊಳ್ಳುವರು.</verse>
				<verse number="18">ಅವರು ನನ್ನನ್ನು ಬಿಟ್ಟು, ಇತರ ದೇವರುಗಳನ್ನು ಆಶ್ರಯಿಸಿ, ಬಹಳ ದುಷ್ಕೃತ್ಯಗಳನ್ನು ನಡೆಸುವುದರಿಂದ ನಾನು ಆ ಕಾಲದಲ್ಲಿ ಖಂಡಿತವಾಗಿ ಅವರಿಗೆ ವಿಮುಖನಾಗುವೆನು.</verse>
				<verse number="19">“ಆದಕಾರಣ ನೀನು ಈ ಗೀತೆಯನ್ನು ಬರೆದು ಇಸ್ರಯೇಲರಿಗೆ ಕಲಿಸಿಕೊಡು; ಈ ಗೀತೆ ಇಸ್ರಯೇಲರಿಗೆ ವಿರೋಧವಾದ, ನನಗೆ ಪರವಾದ ಸಾಕ್ಷಿಯಾಗಿರುವಂತೆ ಇದನ್ನು ಅವರಿಗೆ ಬಾಯಿಪಾಠ ಮಾಡಿಸು.</verse>
				<verse number="20">ನಾನು ಪ್ರಮಾಣಮಾಡಿ ಕೊಟ್ಟ ನಾಡಿಗೆ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆ. ನಾನು ಇವರ ಪಿತೃಗಳಿಗೆ ಪ್ರಮಾಣಮಾಡಿದಂತೆ ಹಾಲೂ ಜೇನೂ ಹರಿಯುವ ನಾಡಿಗೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಉಂಡು ಕೊಬ್ಬಿದವರಾದಾಗ, ಇತರ ದೇವರುಗಳನ್ನು ಅವಲಂಬಿಸಿ, ಪೂಜಿಸಿ, ನನ್ನನ್ನು ತಾತ್ಸಾರಮಾಡಿ, ನನ್ನ ನಿಬಂಧನೆಯನ್ನು ಮೀರುವರು. ಅನಂತರ ಅನೇಕ ಕಷ್ಟಗಳೂ ವಿಪತ್ತುಗಳೂ ಸಂಭವಿಸಿದಾಗ ಈ ಗೀತೆ ಇವರ ಸಂತತಿಯವರ ಬಾಯಲ್ಲಿದ್ದು ಅವರ ಮುಂದೆ ಸಾಕ್ಷಿಕೊಡುವುದು,” ಎಂದು ಹೇಳಿದರು.</verse>
				<verse number="21"></verse>
				<verse number="22">ಆದಕಾರಣ ಮೋಶೆ ಆ ದಿನದಲ್ಲೇ ಈ ಗೀತೆಯನ್ನು ಬರೆದು ಇಸ್ರಯೇಲರಿಗೆ ಕಲಿಸಿದನು.</verse>
				<verse number="23">ಆಗ ಸರ್ವೇಶ್ವರಸ್ವಾಮಿ ನೂನನ ಮಗ ಯೆಹೋಶುವನಿಗೆ, “ನಾನು ಇಸ್ರಯೇಲರಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿರು, ಧೈರ್ಯದಿಂದಿರು; ನಾನೇ ನಿನ್ನೊಂದಿಗೆ ಇರುವೆನು,” ಎಂದು ಆಜ್ಞಾಪಿಸಿದರು.</verse>
				<verse number="24">ಮೋಶೆ ಈ ಧರ್ಮಶಾಸ್ತ್ರವನ್ನು ಗ್ರಂಥರೂಪವಾಗಿ ಬರೆದು ಪೂರೈಸಿದನು; ಬಳಿಕ ಸರ್ವೇಶ್ವರನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಿಗೆ,</verse>
				<verse number="25">“ನೀವು ಈ ಧರ್ಮಶಾಸ್ತ್ರ ಪುಸ್ತಕವನ್ನು ನಿಮ್ಮ ವಶಕ್ಕೆ ತೆಗೆದುಕೊಂಡು ನಿಮ್ಮ ದೇವರಾದ ಸರ್ವೇಶ್ವರನ ಆಜ್ಞಾಶಾಸನಗಳುಳ್ಳ ಮಂಜೂಷದ ಬಳಿಯಲ್ಲೇ ಇಡಿ. ಇಸ್ರಯೇಲರೇ, ಅಲ್ಲಿ ಇದು ನಿಮಗೆ ವಿರೋಧವಾಗಿ ಸಾಕ್ಷಿಕೊಡಲಿ.</verse>
				<verse number="26"></verse>
				<verse number="27">ಏಕೆಂದರೆ ನೀವು ಹಟಮಾರಿಗಳು, ಆಜ್ಞೆಗೆ ಒಳಗಾಗದವರೆಂಬುದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಸರ್ವೇಶ್ವರನಿಗೆ ವಿರುದ್ಧ ಪ್ರತಿಭಟಿಸಿದ್ದೀರಿ; ನಾನು ಹೋದ ತರುವಾಯ ನೀವು ಪ್ರತಿಭಟಿಸುವುದು ಮತ್ತಷ್ಟು ನಿಶ್ಚಯ.</verse>
				<verse number="28">ನಿಮ್ಮ ಕುಲಗಳ ಹಿರಿಯರನ್ನೂ ಅಧಿಪತಿಗಳನ್ನೂ ನನ್ನ ಬಳಿಗೆ ಸೇರಿಸಿರಿ. ನಾನು ಈ ಮಾತುಗಳನ್ನು ಅವರಿಗೆ ತಿಳಿಸಿ, ಅವರಿಗೆ ವಿರುದ್ಧ ಸಾಕ್ಷಿಗಳಾಗುವುದಕ್ಕೆ ಭೂಮ್ಯಾಕಾಶಗಳನ್ನೇ ಕರೆಯುವೆನು.</verse>
				<verse number="29">ನಾನು ಹೋದ ಮೇಲೆ, ನೀವು ದ್ರೋಹಿಗಳಾಗಿ, ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರಿ; ಅನಂತರ ನೀವು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ದುರಾಚಾರಿಗಳಾಗುವಿರಿ; ಅವರನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಬಂದೊದಗುವುದೆಂದು ನಾನು ಬಲ್ಲೆ,” ಎಂದು ಹೇಳಿದನು.</verse>
				<verse number="30">ಆಗ ಮೋಶೆ ಇಸ್ರಯೇಲರ ಸರ್ವಸಮೂಹಕ್ಕೆ ಕೇಳಿಸುವಂತೆ ಈ ಗೀತಾವಚನಗಳನ್ನು ಹೇಳಿದನು:</verse>
			</chapter>
			<chapter number="32">
				<verse number="1">ಆಕಾಶಮಂಡಲವೇ, ಕೇಳು ನಾ ಹೇಳುವುದನು ಭೂಮಂಡಲವೇ, ಆಲಿಸು ನನ್ನ ಮಾತುಗಳನು.</verse>
				<verse number="2">ನನ್ನ ಉಪದೇಶ ಹಸಿಹುಲ್ಲಿನ ಮೇಲೆ ಮೆಲ್ಲನೆ ಸುರಿವ ತುಂತುರುಗಳಂತೆ ನನ್ನ ಬೋಧೆ ಕಾಯಿಪಲ್ಯಗಳ ಮೇಲೆ ಮಂಜಿನಂತೆ ಬೀಳುವ ಹದಮಳೆಯಂತೆ.</verse>
				<verse number="3">ಪ್ರಕಟಿಸುವೆನು ನಾನು ಸರ್ವೇಶ್ವರನ ನಾಮಮಹತ್ವವನು ಕೊಂಡಾಡಿ ನೀವು ಆ ದೇವನ ಮಹಾಮಹಿಮೆಯನು.</verse>
				<verse number="4">“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”</verse>
				<verse number="5">	ಅವರಾದರೋ ದ್ರೋಹಿಗಳು, ಮಕ್ಕಳೆನಿಸಿಕೊಳ್ಳಲು ಅಯೋಗ್ಯರು ವಕ್ರಬುದ್ಧಿಯುಳ್ಳವರು, ಮೂರ್ಖಜಾತಿಯವರು.</verse>
				<verse number="6">ದುರಾಚಾರಿಗಳೇ, ಅವಿವೇಕಿಗಳೇ, ಸರ್ವೇಶ್ವರನ ಬಗ್ಗೆ ಹೀಗೆ ವರ್ತಿಸಬಹುದೇ? ಆತ ನಿಮ್ಮನ್ನು ಸೃಷ್ಟಿಸಿದ ತಂದೆಯಲ್ಲವೆ? ನಿಮ್ಮನ್ನೊಂದು ರಾಷ್ಟ್ರವಾಗಿ ಸ್ಥಾಪಿಸಿದವನಲ್ಲವೆ?</verse>
				<verse number="7">ನೆನಪಿಗೆ ತಂದುಕೊಳ್ಳಿ ಆ ಪೂರ್ವಕಾಲವನು ಆಲೋಚಿಸಿ ನೋಡಿ ಪೂರ್ವಿಕರ ಚರಿತೆಯನು. ವಿಚಾರಿಸಿದರೆ ತಿಳಿಸುವರು ನಿಮ್ಮ ನಿಮ್ಮ ತಂದೆಗಳು ಕೇಳಿದರೆ ವಿವರಿಸುವರು ನಿಮ್ಮ ನಿಮ್ಮ ಹಿರಿಯರು.</verse>
				<verse number="8">ಪರಾತ್ಪರ ದೇವರು ಜನಾಂಗಗಳನು ಬೇರೆಬೇರೆಮಾಡಿದಾಗ, ಅವರವರಿಗೆ ಸ್ವದೇಶಗಳನು ವಿಂಗಡಿಸಿಕೊಟ್ಟಾಗ, ದೇವಕುವರರ ಸಂಖ್ಯಾನುಸಾರ ಪ್ರದೇಶಗಳನು ಗೊತ್ತುಮಾಡಿದಾಗ.</verse>
				<verse number="9">ಇಸ್ರಯೇಲರು ಮಾತ್ರ ಸ್ವಜನರಾದರು ಸರ್ವೇಶ್ವರನಿಗೆ, ಸ್ವಕೀಯ ಪ್ರಜೆಯಾದರು ಆ ಯಕೋಬ ವಂಶಜರು ಆತನಿಗೆ.</verse>
				<verse number="10">ಬರಿದಾದ ಭೀಕರ ಮರುಭೂಮಿಯಲಿ ಅವರನು ಕಂಡು ಕಣ್ಣಗುಡ್ಡೆಯಂತೆ ಕಾಪಾಡಿದ ಪ್ರೀತಿಯಿಂದವರನು ಅಪ್ಪಿಕೊಂಡು.</verse>
				<verse number="11">ಗೂಡಿನಿಂದ ಮರಿಗಳನು ಹೊರಡಿಸಿದಾ ಗರುಡಪಕ್ಷಿ ಹಾರಾಡಿ ಅವು ಬೀಳದಂತೆ ಕಾಯುತ್ತದೆ ರೆಕ್ಕೆಗಳನು ಚಾಚಿ. ಅಂತೆಯೆ ಸರ್ವೇಶ್ವರ ಕಾಪಾಡಿದ ಇಸ್ರಯೇಲರನು ಕೈಚಾಚಿ.</verse>
				<verse number="12">ಅವರನು ನಡೆಸಿದವನು ಸರ್ವೇಶ್ವರನೇ, ಅನ್ಯದೇವರಾರೂ ಇಲ್ಲ, ಆತನೊರ್ವನೇ.</verse>
				<verse number="13">ಹತ್ತಿಸಿದವರನು ಎತ್ತರದ ಪ್ರದೇಶಗಳಿಗೆ ಇತ್ತನವರಿಗೆ ಅಲ್ಲಿಯೆ ಬೆಳೆದ ಪೈರುಫಸಲನೆ. ಗಿಟ್ಟಿತವರಿಗೆ ಗುಡ್ಡದ ಜೇನು, ಗಿರಿಯ ಎಣ್ಣೆಯು.</verse>
				<verse number="14">ಆಹಾರಕ್ಕಿತ್ತು, ಆಕಳಿನ ಮೊಸರೋಗರ ಆಡುಕುರಿಗಳ ಕ್ಷೀರ ಬಾಷಾನಿನ ಪುಷ್ಟಪಶು, ಹೋತ, ಕೊಬ್ಬಿದ ಕುರಿಟಗರಿನ ಮಾಂಸ, ಉತ್ತಮವಾದ ಗೋಧೂಮ; ಪಾನಕ್ಕಿತ್ತು ರಕ್ತಗೆಂಪಾದ ದ್ರಾಕ್ಷಾರಸ.</verse>
				<verse number="15">“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.</verse>
				<verse number="16">ರೇಗಿಸಿದರಾತನನು ಅನ್ಯದೇವರುಗಳನು ಪೂಜಿಸುತ ಸಿಟ್ಟಿಗೇರಿಸಿದರು ನಿಷಿದ್ಧಾಚಾರಗಳನು ನಡೆಸುತ.</verse>
				<verse number="17">ಬಲಿಯನರ್ಪಿಸಿದರು ನೂತನಾ ದೇವತೆಗಳಿಗೆ, ದೇವರಲ್ಲದಾ ಅಸುರರಿಗೆ, ಪಿತೃಗಳು ಭಜಿಸದಾ, ತಮಗೇ ತಿಳಿಯದಾ ಹೊಸ ದೇವತೆಗಳಿಗೆ.</verse>
				<verse number="18">ಎಲೈ ಇಸ್ರಯೇಲರೇ, ಮರೆತಿರಾ ಜನ್ಮವಿತ್ತ ಪೊರೆಬಂಡೆಯನು ಸ್ಮರಿಸಲಿಲ್ಲ ನೀವು ಹೆತ್ತತಾಯಂತಿದ್ದಾ ದೇವರನು.</verse>
				<verse number="19">ಇದ ಕಂಡು ಸರ್ವೇಶ್ವರ ಬೇಸರಗೊಂಡ ತನ್ನಾ ಕುವರಕುವರಿಯರ ನಡತೆಯ ನೋಡಿ ನೊಂದುಕೊಂಡ.</verse>
				<verse number="20">ಎಂದೇ ಇಂತೆಂದುಕೊಂಡನು; ಇವರಿಗೆ ವಿಮುಖನಾಗುವೆನು, ಇವರಿಗೊದಗಲಿರುವ ಗತಿಯನು ನೋಡುವೆನು. ಸತ್ಯವರಿತೂ ಅನುಸರಿಸದೆ ಹೋದರು ಈ ವಿದ್ರೋಹ ಮಕ್ಕಳಂತವರು.</verse>
				<verse number="21">‘ರೇಗಿಸಿದರೆನ್ನನು ದೇವರಲ್ಲದವುಗಳ ಮೂಲಕ, ಸಿಟ್ಟೇರಿಸಿದರು ಅಚೇತ ವಿಗ್ರಹಗಳ ಮೂಲಕ. ನಾನವರಲಿ ಅಸೂಯೆ ಹುಟ್ಟಿಸುವೆನು ಜನಾಂಗವಲ್ಲದವರ ಮುಖಾಂತರ, ನಾನವರನು ಸಿಟ್ಟಿಗೆಬ್ಬಿಸುವೆನು ಸಭ್ಯರಲ್ಲದಾ ಜನರ ಮುಖಾಂತರ.</verse>
				<verse number="22">‘ಉರಿದೇಳುತ್ತಿದೆ ಕೆಳಲೋಕದ ತನಕ ಎನ್ನ ಕೋಪಾಗ್ನಿ ದಹಿಸಿಬಿಡುವುದದು ಭೂಮಿಯನು ಬೆಳೆಸಹಿತವಾಗಿ ಭಸ್ಮಮಾಡುವುದದು ಬೆಟ್ಟಗಳನು ಬುಡಸಮೇತವಾಗಿ.</verse>
				<verse number="23">‘ಉಪದ್ರವಗಳನು ಬರಮಾಡುವೆನು ಒಂದರ ಮೇಲೊಂದಾಗಿ ಬಿಲ್ಲುಬಾಣಗಳನು ಪ್ರಯೋಗಿಸುವೆನು ಅವರಿಗೆ ವಿರುದ್ಧವಾಗಿ.</verse>
				<verse number="24">ಕ್ಷಯಿಸಿಹೋಗುವರವರು ಕ್ಷಾಮಡಾಮರದಿಂದ ಸಾಯುವರು ಶಾಪದಿಂದ, ಅಂಟುರೋಗಗಳಿಂದ, ನಾ ಕಳುಹಿಸುವ ಕಾಡುಮೃಗ, ವಿಷಸರ್ಪಗಳಿಂದ.</verse>
				<verse number="25">ಹೊರಗೆ ಕತ್ತಿ, ಒಳಗೆ ಭಯಭೀತಿ ಇವರಲ್ಲಿರುವುವು. ಯುವಕ ಯುವತಿಯರು, ಮಕ್ಕಳು ಮುದುಕರು ಕತ್ತಿಕಠಾರಿಗಳಿಗೆ ತುತ್ತಾಗುವರು ಇವರೆಲ್ಲರು.</verse>
				<verse number="26">ನಾಶ ಮಾಡುತ್ತಿದ್ದೆ ನಾನವರನು ಸಂಪೂರ್ಣವಾಗಿ ಅವರಿಲ್ಲದಂತೆ ಮಾಡುತ್ತಿದ್ದೆ ಯಾರೊಬ್ಬರ ನೆನಪಿನಲಿ.</verse>
				<verse number="27">ಆದರೆ ತಪ್ಪು ತಿಳಿಯುತ್ತಿದ್ದರು ಅವರ ವಿರೋಧಿಗಳು; ‘ಇದಾಯಿತು ನಮ್ಮ ಶಕ್ತಿಯಿಂದ, ಸರ್ವೇಶ್ವರನಿಂದಲ್ಲ’ವೆಂದುಕೊಂಡು ಈ ಕಾರಣ ಹಿಂತೆಗೆದುಕೊಂಡೆನು ನನ್ನ ನಿಗದಿನಿರ್ಣಯವನು.</verse>
				<verse number="28">“ಆಲೋಚನೆಯಿಲ್ಲದ ಜನರಿವರು ಸ್ವಲ್ಪವಾದರೂ ವಿವೇಕವಿಲ್ಲದವರು.</verse>
				<verse number="29">ಜ್ಞಾನವಿದ್ದಿದ್ದರೆ ಗ್ರಹಿಸುತ್ತಿದ್ದರು ಈ ಸಂಗತಿಗಳನು ತಿಳಿಯುತ್ತಿದ್ದರು, ಅಂತ್ಯದೊಳು ತಮಗಾಗುವ ದುರವಸ್ಥೆಯನು.</verse>
				<verse number="30">ಒಬ್ಬನಿಂದ ಸಾವಿರ ಮಂದಿ ಸೋತುಹೋದುದು’ ಒಬ್ಬರಿಗಂಜಿ ಹತ್ತುಸಾವಿರ ಓಡಿಹೋದುದು, ಅವರ ಪೊರೆಬಂಡೆಯಾತ ಅವರನು ವೈರಿಗೊಪ್ಪಿಸಿದ್ದರಿಂದಲ್ಲವೆ? ಅವರ ಸರ್ವೇಶ್ವರನು ಅವರನು ಕೈಬಿಟ್ಟುದರಿಂದಲ್ಲವೆ?</verse>
				<verse number="31">‘ನಮ್ಮಾಶ್ರಯ ದುರ್ಗ ಅವರ ಆಶ್ರಯದುರ್ಗದಂತಲ್ಲ’ ಎಂದು ಅವರ ಶತ್ರುಗಳೇ ಒಪ್ಪಿಕೊಳ್ಳುತ್ತಾರಲ್ಲವೆ?</verse>
				<verse number="32">ಅವರೋ ಸೊದೋಮ್ಯರೆಂಬ ದ್ರಾಕ್ಷಾಲತೆ ಅವರೋ ಗೊಮೋರ್ಯರೆಂಬ ತೋಟದಬೆಳೆ.</verse>
				<verse number="33">ಅವುಗಳ ಹಣ್ಣಿನ ಗೊಂಚಲು ವಿಷ ಅವುಗಳ ರಸ ಮರಣಕರ ಸರ್ಪವಿಷ.</verse>
				<verse number="34">“ಇಸ್ರಯೇಲನನು ಇಟ್ಟಿದ್ದೇನೆ ಮುದ್ರೆಹಾಕಿ ಉಗ್ರಾಣದೊಳು ಇಟ್ಟಿದ್ದೇನೆ ಭದ್ರವಾಗಿ.</verse>
				<verse number="35">ಅವನ ಶತ್ರುಗಳಿಗೆ ಮುಯ್ಯಿತೀರಿಸುವುದು ನನ್ನ ಕೆಲಸ; ಸಮೀಪಿಸಿತವರಿಗೆ ಜಾರಿಬೀಳುವ ಸಮಯ, ವಿಪತ್ಕಾಲ; ಬೇಗಬರುವುದು ಅವರಿಗೆ ಸಿದ್ಧವಾದ ದುರ್ಗತಿಕಾಲ!</verse>
				<verse number="36">ಸ್ವತಂತ್ರರು, ಪರತಂತ್ರರು ನಿರಾಶ್ರಯರಾದಾಗ ಅವರೆಲ್ಲರು ನಿಶ್ಯೇಷರಾದವರು ಎಂದು ತಿಳಿದುಬಂದಾಗ ದೊರಕಿಸುವನು ಸರ್ವೇಶ್ವರನು ನ್ಯಾಯವನು ತನ್ನ ಪ್ರಜೆಗೆ ತೋರುವನು ಅನುಕಂಪವನು ತನ್ನ ಭಕ್ತಾದಿಗಳಿಗೆ.</verse>
				<verse number="37">ಆಗ ನುಡಿವನು ಸ್ವಾಮಿ ಸರ್ವೇಶ್ವರ ಇಂತೆಂದು; ಎಲ್ಲಿಗೆ ಹೋದರು ಅವರು ಪೂಜಿಸುತ್ತಿದ್ದ ದೇವರುಗಳು? ಎಲ್ಲಿರುವನು ಅವರು ಆಶ್ರಯಿಸಿಕೊಂಡಿದ್ದ ದುರ್ಗವಾದವನು.</verse>
				<verse number="38">ಅವರು ಬಲಿಕೊಟ್ಟ ಕೊಬ್ಬು ಮಾಂಸವನು ತಿಂದವರೆಲ್ಲಿ? ಸಮರ್ಪಿಸಿದ ಪಾನಗಳನು ಕುಡಿದ ದೇವತೆಗಳೆಲ್ಲಿ? ಅವರೇ ನಿಮಗೆ ನೆರವಾಗಲಿ, ನಿಮ್ಮನೀಗ ಕಾಯಲಿ!</verse>
				<verse number="39">“ಇರುವಾತನು ನಾನೇ, ನಾನೊಬ್ಬನೇ ಬದುಕಿಸುವವನು, ಕೊಲ್ಲುವವನು ನಾನೇ, ಗಾಯಗೊಳಿಸುವವನು, ವಾಸಿಮಾಡುವವನು ನಾನೇ. ಇಂದಾದರು ತಿಳಿಯಿರಿ: ನನ್ನ ವಿನಾ ದೇವರಿಲ್ಲ ನನ್ನ ಕೈಯಿಂದ ತಪ್ಪಿಸಬಲ್ಲ ಶಕ್ತನಾರೂ ಇಲ್ಲ.</verse>
				<verse number="40">ಆಕಾಶದತ್ತ ಕೈಯೆತ್ತಿ ಪ್ರಮಾಣಮಾಡುವೆ, ಚಿರಂಜೀವಿಯಾದೆನ್ನ ಮೇಲೆ ಆಣೆಯಿಟ್ಟು ಹೇಳುವೆ:</verse>
				<verse number="41">ಥಳಥಳಿಸುವ ಕತ್ತಿಯನು ಹದಮಾಡಿ ನ್ಯಾಯಸ್ಥಾಪಿಸುವೆನು ಮುನ್ನುಗ್ಗಿ. ಮುಯ್ಯಿ ತೀರಿಸುವೆನು ನನ್ನ ಶತ್ರುಗಳಿಗೆ ಪ್ರತಿದಂಡಿಸುವೆನು ನನ್ನ ದ್ವೇಷಿಸಿದವಗೆ.</verse>
				<verse number="42">ಮತ್ತವಾಗುವುವು ನನ್ನ ಬಾಣಗಳು ರಕ್ತಕುಡಿದು; ನನ್ನ ಕತ್ತಿಯು ತಿನ್ನುವುದು ಸತ್ತವರ, ಖೈದಿಗಳ ರಕ್ತಮಾಂಸವನು; ಚೆಂಡಾಡುವುವು ಶತ್ರುವೀರರ ತಲೆಬುರುಡೆಗಳು.</verse>
				<verse number="43">“ಜನಾಂಗಗಳೇ ಕೊಂಡಾಡಿರಿ ದೇವಜನರೊಡನೆ! ತನ್ನ ಭಕ್ತಾದಿಗಳ ರಕ್ತ ಚೆಲ್ಲಿದಾ ಶತ್ರುಗಳಿಗೆ ದಂಡಿಸಿ ಮುಯ್ಯಿತೀರಿಸುವವನು ಸರ್ವೇಶ್ವರನೇ. ತನ್ನ ಜನರಾ ನಾಡಿಗೆ ದೋಷಪರಿಹಾರಮಾಡುವವನು ಆತನೇ.”</verse>
				<verse number="44">ಜನರಿಗೆ ಕೇಳಿಸುವಂತೆ ಹೇಳಿದರು ಈ ಗೀತವಚನಗಳನು ಮೋಶೆಯು ಮತ್ತು ನೂನನ ಮಗನಾದ ಯೆಹೋಶುವನು.</verse>
				<verse number="45">ಮೋಶೆ ಈ ಮಾತುಗಳನ್ನೆಲ್ಲ ಇಸ್ರಯೇಲರಿಗೆ ಹೇಳಿ ಮುಗಿಸಿದನಂತರ ಅವರಿಗೆ,</verse>
				<verse number="46">“ನಾನು ಈಗ ನಿಮಗೆ ಹೇಳಿದ ಎಚ್ಚರಿಕೆಯ ಮಾತುಗಳನ್ನೆಲ್ಲ ಮನಸ್ಸಿನಲ್ಲಿಟ್ಟುಕೊಳ್ಳಿರಿ; ನಿಮ್ಮ ಸಂತತಿಯವರಿಗೆ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಬೇಕೆಂದು ಆಜ್ಞಾಪಿಸಿರಿ.</verse>
				<verse number="47">ಇದು ನಿರರ್ಥಕವೆಂದು ಭಾವಿಸಬೇಡಿ; ಇದರಿಂದ ನೀವು ಬಾಳುವಿರಿ; ನೀವು ಜೋರ್ಡನ್ ನದಿಯನ್ನು ದಾಟಿ ಸ್ವಾಧೀನಮಾಡಿಕೊಳ್ಳಲು ಹೋಗುವ ನಾಡಿನಲ್ಲಿ ಇದನ್ನು ಅನುಸರಿಸುವುದರಿಂದಲೇ ಬಹುಕಾಲ ಇರುವಿರಿ,” ಎಂದು ಹೇಳಿದನು.</verse>
				<verse number="48">ಆ ದಿನದಲ್ಲೇ ಸರ್ವೇಶ್ವರ ಮೋಶೆಗೆ, “ನೀನು ಈ ಅಬಾರೀಮ್ ಬೆಟ್ಟಗಳನ್ನು ಅಂದರೆ, ಮೋವಾಬ್ಯರ ದೇಶದಲ್ಲಿ ಜೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಬೆಟ್ಟವನ್ನು ಹತ್ತಿ ನಾನು ಇಸ್ರಯೇಲರಿಗೆ ಸ್ವದೇಶವಾಗಲೆಂದು ಕೊಡುವ ಕಾನಾನ್ ನಾಡನ್ನು ನೋಡು.</verse>
				<verse number="49"></verse>
				<verse number="50">ಅನಂತರ, ನಿನ್ನ ಅಣ್ಣನಾದ ಆರೋನನು ಹೇಗೆ ಹೋರೆಂಬ ಬೆಟ್ಟದಲ್ಲಿ ದೇಹವನ್ನು ಬಿಟ್ಟು ತನ್ನ ಪಿತೃಗಳಲ್ಲಿಗೆ ಸೇರಿದನೋ ಹಾಗೆಯೇ ನೀನೂ ಈ ಬೆಟ್ಟದಲ್ಲಿ ದೇಹವನ್ನು ಬಿಟ್ಟು ಪಿತೃಗಳಲ್ಲಿಗೆ ಸೇರಬೇಕು.</verse>
				<verse number="51">ನೀವಿಬ್ಬರೂ ಚಿನ್ ಮರುಭೂಮಿಯಲ್ಲಿನ ಮೆರೀಬಾ ಕಾದೇಶಿನಲ್ಲಿ ನೀರು ಹೊರಟು ಬಂದ ಸ್ಥಳದ ಬಳಿಯಲ್ಲಿ, ಇಸ್ರಯೇಲರ ಮಧ್ಯೆ ನನಗೆ ವಿರೋಧವಾಗಿ ದ್ರೋಹಮಾಡಿದಿರಿ; ಅವರ ಮುಂದೆ ನನ್ನ ಗೌರವವನ್ನು ಕಾಪಾಡದೆಹೋದಿರಿ. ಆದುದರಿಂದಲೇ ಹೀಗೆ ಆಗಬೇಕು.</verse>
				<verse number="52">ನಾನು ಇಸ್ರಯೇಲರಿಗೆ ಕೊಡುವ ನಾಡನ್ನು ನೀನು ದೂರದಿಂದ ನೋಡಬಹುದೇ ಹೊರತು, ಅದರಲ್ಲಿ ಪ್ರವೇಶಿಸಕೂಡದು,” ಎಂದು ಆಜ್ಞಾಪಿಸಿದರು.</verse>
			</chapter>
			<chapter number="33">
				<verse number="1">ದೇವಪುರುಷನದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಯೇಲರನ್ನು ಕುರಿತು ಹೇಳಿದ ಆಶೀರ್ವಚನಗಳಿವು:</verse>
				<verse number="2">ಸರ್ವೇಶ್ವರ ಸೀನಾಯ್ ಬೆಟ್ಟದಿಂದ ಬಂದರು, ಸೇಯೀರ್ ಎಂಬ ಸೀಮೆಯೊಳಗಿಂದ ಉದಯಿಸಿದರು, ಪಾರಾನ್ ಎಂಬ ಪರ್ವತದಿಂದ ಪ್ರಜ್ವಲಿಸಿದರು, ಲಕ್ಷಾಂತರ ಸಂತರ ಮಧ್ಯೆಯಿಂದ ದಯಮಾಡಿದರು. ಅಗ್ನಿಸದೃಶವಾದ ಧರ್ಮಶಾಸ್ತ್ರ ಅವರ ಬಲಪಾರ್ಶ್ವದಲ್ಲಿತ್ತು.</verse>
				<verse number="3">ಹೌದು, ಆತ ಪ್ರೀತಿಸುತ್ತಾನೆ ತನ್ನ ಪ್ರಜೆಯನ್ನು, ಆಶ್ರಯ ನೀಡುತ್ತಾನೆ ತನ್ನ ಭಕ್ತರೆಲ್ಲರಿಗು. ಎಂದೇ ಆತನ ಆಜ್ಞೆಗಳಿಗೆ ತಲೆಬಾಗುವೆವು, ಆತನ ಪಾದಚರಣದಲೆ ಕುಳಿತಿರುವೆವು.</verse>
				<verse number="4">ಯಕೋಬ ಸಂತತಿಯಾದ ನಮಗೆ ಇತ್ತನು ಮೋಶೆ ಧರ್ಮಶಾಸ್ತ್ರವನ್ನು ಸೊತ್ತಾಗಿ</verse>
				<verse number="5">ಇಸ್ರಯೇಲರ ಕುಲಗಳು ಒಂದಾದಾಗ ಜನನಾಯಕರು ಒಟ್ಟಾಗಿ ಕೂಡಿದಾಗ ಯೆಶುರೂನಿನಲಿ ಸರ್ವೇಶ್ವರನೇ ಅರಸನಾದ.</verse>
				<verse number="6">ರೂಬೇನ್ ಕುಲ ಕುರಿತು ಮೋಶೆ ನುಡಿದದ್ದು: “ರೂಬೇನ್ ಅಳಿಯದೆ ಉಳಿಯಲಿ ಅವನ ಮಕ್ಕಳು ಅಸಂಖ್ಯಾತರಾಗದಿರಲಿ.”</verse>
				<verse number="7">ಯೆಹೂದ ಕುಲ ಕುರಿತು ಮೋಶೆ ಹೇಳಿದ್ದು: “ಸರ್ವೇಶ್ವರಾ, ಯೆಹೂದನ ಮೊರೆಯನ್ನಾಲಿಸು ಬಂಧುಗಳೊಡನೆ ಅವನನ್ನು ಮರಳಿ ಸೇರಿಸು ತನ್ನ ಹಕ್ಕುಬಾಧ್ಯತೆಗಳನ್ನು ಕಾದಿರಿಸಿಕೊಳ್ಳಲು ಶತ್ರುಗಳ ಕೈಯಿಂದ ಅವನನ್ನು ತಪ್ಪಿಸು.”</verse>
				<verse number="8">ಲೇವಿಯ ಕುಲ ಕುರಿತು ಮೋಶೆ ನುಡಿದದ್ದು: “ಸರ್ವೇಶ್ವರಾ, ನೀಡಿವನಿಗೆ ನಿನ್ನ ವಿಧಿ ತಿಳಿಸುವ ಊರಿಮ್, ನಿನ್ನ ಭಕ್ತನಾದ ಇವನ ವಶದಲ್ಲಿರಲಿ ಆ ತುಮ್ಮೀಮ್. ನೀನಿವನನ್ನು ಪರೀಕ್ಷಿಸಿದೆ ಮಸ್ಸದಲ್ಲಿ ವಿವಾದಿಸಿದೆ ಜಲ ಹೊರಹೊಮ್ಮಿದ ಮೆರೀಬದಲ್ಲಿ.</verse>
				<verse number="9">ನಿನ್ನ ಆಜ್ಞೆಗಳನ್ನು ಕೈಗೊಳ್ಳಲೆಂದು ನಿನ್ನ ಒಡಂಬಡಿಕೆಯನು ಕಾದಿರಿಸಲೆಂದು ‘ತಂದೆತಾಯಿಗಳ ಪರಿಚಯವಿಲ್ಲ ಅಣ್ಣತಮ್ಮಂದಿರ ಅರಿವಿಲ್ಲ ಸ್ವಂತ ಮಕ್ಕಳ ಗುರುತಿಲ್ಲ’ ಎಂದನಿವನು.</verse>
				<verse number="10">ತಿಳಿಸುವನಿವನು ನಿನ್ನ ನಿರ್ಣಯವನು ಯಕೋಬನಿಗೆ ಕಲಿಸುವನು ನಿನ್ನ ಧರ್ಮಶಾಸ್ತ್ರವನು ಇಸ್ರಯೇಲನಿಗೆ. ಧೂಪಾರತಿ ಎತ್ತುವನು ನಿನ್ನ ಸನ್ನಿಧಿಯಲಿ ದಹನಬಲಿ ಸಮರ್ಪಿಸುವನು ನಿನ್ನ ಬಲಿಪೀಠದಲಿ.</verse>
				<verse number="11">ಸರ್ವೇಶ್ವರಾ, ವೃದ್ಧಿಪಡಿಸು ಇವನ ಆಸ್ತಿಯನು ಸಮರ್ಪಕವಾಗಿರಲಿ ನಿನಗೆ ಇವನ ಸೇವೆಯು ಇವನ ಶತ್ರುಗಳ ನಡುವನ್ನು ಮುರಿ ಮರಲಿ ಏಳದಂತೆ ಮಾಡು ಇವನ ವೈರಿ.”</verse>
				<verse number="12">ಬೆನ್ಯಾಮೀನ್ ಕುಲ ಕುರಿತು ಮೋಶೆ ನುಡಿದದ್ದು: “ಸರ್ವೇಶ್ವರನಿಗೆ ಪ್ರಿಯನಾದ ಇವನು ನಿರ್ಭಯವಾಗಿ ವಾಸಮಾಡುವನು. ಇವನನ್ನಾತ ತಬ್ಬಿರುವನು ದಿನವಿಡೀ ತನ್ನ ತೋಳತೆಕ್ಕೆಯಲಿ.”</verse>
				<verse number="13">ಜೋಸೆಫ್ ಕುಲ ಕುರಿತು ಮೋಶೆ ನುಡಿದದ್ದು: “ಇವನ ಪ್ರಾಂತ್ಯ ಆಶೀರ್ವದಿತವಾಗಲಿ ಸರ್ವೇಶ್ವರನಿಂದ ಮೇಲಣ ಆಕಾಶದ ಮಂಜಿನಿಂದ ಕೆಳಗಿನ ಸಾಗರದ ಒರತೆಗಳಿಂದ;</verse>
				<verse number="14">ಸೂರ್ಯನಿಂದ ಫಲಿಸುವ ಪಸಲುಗಳಿಂದ ತಿಂಗಳು ತಿಂಗಳು ಆಗುವ ಬೆಳೆಗಳಿಂದ;</verse>
				<verse number="15">ಪುರಾತನ ಬೆಟ್ಟಗಳಿಂದ ಒದಗುವ ಉತ್ಪನ್ನಗಳಿಂದ ಶಾಶ್ವತ ಪರ್ವತಗಳಿಂದ ಸಿಗುವ ಒಳಿತುಗಳಿಂದ.</verse>
				<verse number="16">ಸೋದರರಿಗೆ ಸಾಮ್ರಾಟನಾದ ಜೋಸೆಫನ ಪಾಲಿಗೆ ಬರಲಿ ಇವನ ಕುಲದ ಮೇಲೆ ನೆಲಸಲಿ ನೆಲಬೆಳೆಸುವ ಫಲಗಳಲಿ ಶ್ರೇಷ್ಠವಾದುದೆಲ್ಲವು ಮುಳ್ಳುಪೊದೆಯಲಿ ಕಾಣಿಸಿಕೊಂಡಾತನ ದಯೆಯು!</verse>
				<verse number="17">ಜೋಸೆಫನದು ಜೇಷ್ಠಸಂತತಿಯು ಗೂಳಿಯ ಗಾಂಭೀರ್ಯವೂ ಅವನ ಕೊಂಬುಗಳು, ಕಾಡುಕೋಣದ ಕೊಂಬುಗಳು ಅವುಗಳಿಂದ ಇರಿದು ಓಡಿಸಬಲ್ಲನು ಜಗದ ಜನಾಂಗಗಳನು! ಇವನಂಥವರು ಎಫ್ರಯಿಮ್ ಕುಲದ ಕೋಟ್ಯಾಂತರ ಜನರು ಇವನಂಥವರು ಮನಸ್ಸೆಕುಲದ ಲಕ್ಷಾಂತರ ಮಂದಿಗಳು.”</verse>
				<verse number="18">ಜೆಬುಲೂನ್ ಮತ್ತು ಇಸ್ಸಾಕಾರ ಕುಲ ಕುರಿತು ಮೋಶೆ ನುಡಿದದ್ದು: “ಜೆಬುಲೂನೇ, ಸಂತೋಷವಾಗಿರು ನಿನ್ನ ಪಯಣಗಳಲ್ಲಿ. ಇಸ್ಸಾಕಾರನೇ, ಆನಂದವಾಗಿರು ನಿನ್ನ ಪಾಳೆಯಗಳಲ್ಲಿ.</verse>
				<verse number="19">ಇವರು ಕರೆದುತರುವರು ಅನ್ಯಜನಗಳನು ಮಲೆನಾಡಿಗೆ ಅರ್ಪಿಸತರುವರು ನ್ಯಾಯಯುತವಾದ ಬಲಿಗಳನು ಅಲ್ಲಿಗೆ. ಸವಿವರು ಕಡಲ ಸಿರಿಯನು ನೆಲದಲ್ಲಡಗಿರುವ ಸಂಪದವನು.”</verse>
				<verse number="20">ಗಾದ್ ಕುಲ ಕುರಿತು ಮೋಶೆ ನುಡಿದದ್ದು: “ಗಾದ್ಯರ ಪ್ರಾಂತ್ಯವನು ವಿಸ್ತರಿಸಿದ ಸರ್ವೇಶ್ವರನಿಗೆ ಸ್ತೋತ್ರವು! ಸಿಂಹದಂತೆ ಹೊಂಚುಹಾಕಿ ಮುರಿವನು ಗಾದನು ಶತ್ರುಗಳ ಭುಜವನು, ಶಿರವನು.</verse>
				<verse number="21">ತನಗೆಂದು ತೆಗೆದುಕೊಂಡನು ನಾಡಿನ ಮೊದಲಭಾಗವನು ದೊರಕಿತಲ್ಲಿ ಅವನಿಗೆ ಮುಖ್ಯಸ್ಥನಿಗಾಗುವ ಸ್ವಾಸ್ತ್ಯವು. ಜನಾಧಿಪತಿಗಳ ಜೊತೆಬಂದು ನೆರವೇರಿಸಿದನು ಸರ್ವೇಶ್ವರನ ಆಣತಿಯನು; ಇಸ್ರಯೇಲನೊಡನೆ ಸ್ಥಾಪಿಸಿದನು ಸರ್ವೇಶ್ವರನ ನ್ಯಾಯನೀತಿಯನು.”</verse>
				<verse number="22">ದಾನ್ ಕುಲ ಕುರಿತು ಮೋಶೆ ನುಡಿದದ್ದು: “ದಾನನು ಬಾಷಾನ್ ದೇಶದಿಂದ ಧಾವಿಸಿಬಂದ ಯುವಸಿಂಹನು!”</verse>
				<verse number="23">ನಫ್ತಾಲಿ ಕುಲ ಕುರಿತು ಮೋಶೆ ನುಡಿದದ್ದು: “ಎಲೈ ನಫ್ತಾಲಿ, ಸರ್ವೇಶ್ವರನ ದಯೆಹೊಂದಿ ನೀ ತೃಪ್ತನಾದೆ ಆತನ ಆಶೀರ್ವಾದದಿಂದ ಸಮೃದ್ಧಿಯುಂಟು ನಿನಗೆ ಸಮುದ್ರದ ದಕ್ಷಿಣಪ್ರದೇಶ ಸೊತ್ತಾಗಲಿ ನಿನಗೆ.”</verse>
				<verse number="24">ಆಶೇರ್ ಕುಲ ಕುರಿತು ಮೋಶೆ ನುಡಿದದ್ದು: “ಕುಲೋತ್ತಮನಾದ ಆಶೇರನು ಭಾಗ್ಯಹೊಂದಲಿ ಎಲ್ಲದರಲಿ ಸೋದರರಲ್ಲಿ ಶ್ರೇಷ್ಠತೆಯನು ಪಡೆಯಲಿ ಎಣ್ಣೆಯಲಿ ಪಾದಸ್ನಾನ ಮಾಡುವಂತಾಗಲಿ.</verse>
				<verse number="25">ನಿನ್ನ ಕೋಟೆಯ ಬಾಗಿಲು ಕಬ್ಬಿಣದವು ಅವುಗಳ ಅಗುಳಿಗಳು ಕಂಚಿನವು ನೀನಿರುವಷ್ಟು ಕಾಲ ನಿನಗಿರುವುದು ಬಲವು.”</verse>
				<verse number="26">ಇಸ್ರಯೇಲಿನ ಜನರೇ, ನಿಮ್ಮ ದೇವರಿಗೆ ಸಮಾನನಾರೂ ಇಲ್ಲ, ಆತ ಬರುವನು ಆಕಾಶವನ್ನೇರಿ, ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ಬರುವನು ನಿಮ್ಮ ನೆರವಿಗಾಗಿ.</verse>
				<verse number="27">ಆದಿಯಿಂದ ದೇವರೇ ನಿಮಗೆ ಶ್ರೀನಿವಾಸ ಆತನ ಹಸ್ತವೇ ನಿಮಗೆ ನಿತ್ಯಾಧಾರ! ಶತ್ರುಗಳನು ಹೊರಡಿಸುವನು ನಿಮ್ಮ ಬಳಿಯಿಂದ ಅವರನು ಸಂಹರಿಸಲು ಆಜ್ಞಾಪಿಸಿಹನು ಆತ.</verse>
				<verse number="28">ವಾಸಿಸಿರಿ ಇಸ್ರಯೇಲರೇ, ನಿರ್ಭಯರಾಗಿ ಯಕೋಬನ ಸಂತತಿಯೇ, ಸುರಕ್ಷಿತವಾಗಿ ಆಗಸದಿಂದ ಮಳೆಸುರಿಯುವ ನಾಡಿನಲ್ಲಿ ಧಾನ್ಯ, ದ್ರಾಕ್ಷಾರಸ ಸಮೃದ್ಧಿಯಾಗಿರುವಲ್ಲಿ!</verse>
				<verse number="29">ಇಸ್ರಯೇಲ್, ನೀನು ಎಷ್ಟೋ ಧನ್ಯ! ಯಾರಿಗಿದೆ ನಿನಗಿರುವಂತೆ ಭಾಗ್ಯ! ಜಯಗಳಿಸಿರುವೆ ಸರ್ವೇಶ್ವರನ ಅನುಗ್ರಹದಿಂದ. ಆತನೇ ನಿನ್ನ ಕಾಪಾಡುವ ಗುರಾಣಿ ನಿನ್ನ ಗೌರವವನ್ನು ಕಾಯುವ ಕತ್ತಿ. ಎಂದೇ ಮುದುರಿಕೊಳ್ಳುವರು ಶತ್ರುಗಳು ನಿನ್ನ ಮುಂದೆ ಜಯಶೀಲನಾಗಿ ನೀ ಮೆರೆವೆ ಅವರ ಮಲೆನಾಡಿನಲ್ಲೆ.</verse>
			</chapter>
			<chapter number="34">
				<verse number="1">ಮೋಶೆ ಮೋವಾಬ್ಯರ ಬಯಲು ನಾಡಿನಿಂದ ಜೆರಿಕೋ ಪಟ್ಟಣಕ್ಕೆ ಎದುರಾಗಿ ಇರುವ ನೆಬೋ ಪರ್ವತಕ್ಕೆ ಹೋಗಿ, ಪಿಸ್ಗಾ ಎಂಬ ಬೆಟ್ಟದ ಶಿಖರವನ್ನು ಹತ್ತಿದನು. ಆಗ ಸರ್ವೆಶ್ವರ ಕಾನಾನ್ ನಾಡೆಲ್ಲವನ್ನು ಅಂದರೆ, ದಾನ್ ಪಟ್ಟಣದವರೆಗಿದ್ದ ಗಿಲ್ಯಾದ್ ಪ್ರಾಂತ್ಯ,</verse>
				<verse number="2">ನಫ್ತಾಲಿ ಪ್ರದೇಶ, ಎಫ್ರಯಿಮ್ ಮನಸ್ಸೆ ಕುಲಗಳವರ ಪ್ರಾಂತ್ಯ, ಪಶ್ಚಿಮ ಸಮುದ್ರದವರೆಗಿದ್ದ ಜುದೇಯನಾಡು,</verse>
				<verse number="3">ದಕ್ಷಿಣ ಪ್ರದೇಶ, ಚೋಗರೂರಿನ ತನಕ ಇದ್ದ ಜೆರಿಕೋ ಖರ್ಜೂರಗಳ ಪಟ್ಟಣದ ಸುತ್ತಲಿನ ಬಯಲು, ಇದನ್ನೆಲ್ಲಾ ಅವನಿಗೆ ತೋರಿಸಿದರು.</verse>
				<verse number="4">ಅನಂತರ, “ನಾನು ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಮಾಡಿ ಅವರ ಸಂತತಿಯವರಿಗೆ ಕೊಡುವೆನೆಂದು ವಾಗ್ದಾನ ಮಾಡಿದ ನಾಡು ಇದೇ; ಇದನ್ನು ನಿನಗೆ ಪ್ರತ್ಯಕ್ಷವಾಗಿ ತೋರಿಸಿದ್ದೇನೆ. ಆದರೆ ನೀನು ನದಿದಾಟಿ ಅಲ್ಲಿಗೆ ಹೋಗಕೂಡದು,” ಎಂದು ಹೇಳಿದರು.</verse>
				<verse number="5">ಸರ್ವೇಶ್ವರನ ಮಾತಿನಂತೆ ಅವರ ದಾಸ ಮೋಶೆ ಅಲ್ಲೇ ಮೋವಾಬ್ಯರ ದೇಶದಲ್ಲಿ ಮೃತನಾದನು.</verse>
				<verse number="6">ಮೋವಾಬ್ಯರ ದೇಶದಲ್ಲಿ ಬೇತ್ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಅವನ ದೇಹವನ್ನು ಸಮಾಧಿಮಾಡಿದರು. ಅವನ ಸಮಾಧಿ ಎಲ್ಲಿದೆಯೆಂದು ಇಂದಿನವರೆಗೆ ಯಾರಿಗೂ ತಿಳಿಯದು.</verse>
				<verse number="7">ಮೋಶೆ ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ, ಅವನ ಜೀವಕಳೆ ಕುಂದಿಹೋಗಿರಲಿಲ್ಲ.</verse>
				<verse number="8">ಮೋವಾಬ್ಯರ ಬಯಲಿನಲ್ಲಿ ಇಸ್ರಯೇಲರು ಮೋಶೆಗಾಗಿ ಮೂವತ್ತು ದಿನ ದುಃಖಿಸಿದರು. ಅಲ್ಲಿಗೆ ಮೋಶೆಯ ಸಂತಾಪದ ದಿನಗಳು ಮುಗಿದವು.</verse>
				<verse number="9">ಮೋಶೆ ನೂನನ ಮಗನಾದ ಯೆಹೋಶುವನ ಮೇಲೆ ಹಸ್ತಕ್ಷೇಪಮಾಡಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರ ಇಸ್ರಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.</verse>
				<verse number="10">ಸರ್ವೇಶ್ವರ ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತಾಡಿದರು.</verse>
				<verse number="11">ಈಜಿಪ್ಟ್ ದೇಶದಲ್ಲಿ ಫರೋಹನ ಮುಂದೆ ಹಾಗು ಅವನ ಪ್ರಜಾಪರಿವಾರದವರ ಮುಂದೆ ಅವನು ವಿಧವಿಧವಾದ ಪವಾಡಗಳನ್ನೂ ಮಹತ್ಕಾರ್ಯಗಳನ್ನೂ ನಡೆಸಿದನು; ಸರ್ವೇಶ್ವರ ಅವನನ್ನು ಅದಕ್ಕಾಗಿಯೇ ಕಳುಹಿಸಿದ್ದರು.</verse>
				<verse number="12">ಇಸ್ರಯೇಲರ ಕಣ್ಮುಂದೆ ವಿಶೇಷ ಭುಜಪರಾಕ್ರಮವನ್ನೂ ಆಶ್ಚರ್ಯಕರವಾದ ಕಾರ್ಯಗಳನ್ನೂ ನಡೆಸಿದನು. ಇಂಥವನಿಗೆ ಸಮಾನನಾದ ಮತ್ತೊಬ್ಬ ಪ್ರವಾದಿ ಈಚೆಗೆ ಇಸ್ರಯೇಲರಲ್ಲಿ ಹುಟ್ಟಲೇ ಇಲ್ಲ.</verse>
			</chapter>
		</book>
		<book number="6">
			<chapter number="1">
				<verse number="1">ಸರ್ವೇಶ್ವರಸ್ವಾಮಿ, ತಮ್ಮ ದಾಸ ಮೋಶೆ ಮರಣಹೊಂದಿದ ಮೇಲೆ ಅವನ ಶಿಷ್ಯನಾದ ನೂನನ ಮಗ ಯೆಹೋಶುವನಿಗೆ ಹೀಗೆಂದು ಆಜ್ಞಾಪಿಸಿದರು:</verse>
				<verse number="2">ನೀನೀಗ ಎದ್ದು ಸಮಸ್ತ ಪ್ರಜೆಯೊಂದಿಗೆ ಜೋರ್ಡನ್ ನದಿಯನ್ನು ದಾಟಿ, ನಾನು ಇಸ್ರಯೇಲರಿಗೆ ಕೊಡುವ ನಾಡಿಗೆ ಹೋಗು.</verse>
				<verse number="3">ನಾನು ಮೋಶೆಗೆ ಹೇಳಿದಂತೆ ನೀವು ಕಾಲಿಡುವ ಸ್ಥಳವನ್ನೆಲ್ಲಾ ನಿಮಗೆ ಕೊಟ್ಟಿದ್ದೇನೆ.</verse>
				<verse number="4">ಬೆಂಗಾಡು ಹಾಗೂ ಲೆಬನೋನ್ ಪರ್ವತದಿಂದ ಯೂಫ್ರೆಟಿಸ್ ಮಹಾನದಿಯ ವರೆಗಿರುವ ಹಿತ್ತಿಯರ ನಾಡೆಲ್ಲ ನಿಮ್ಮದಾಗುವುದು. ನಿಮ್ಮ ಸೀಮೆ ಪಶ್ಚಿಮ ದಿಕ್ಕಿನ ಮಹಾಸಾಗರದ ವರೆಗೆ ವಿಸ್ತರಿಸಿಕೊಳ್ಳುವುದು.</verse>
				<verse number="5">ನಿನ್ನ ಜೀವಮಾನವಿಡೀ ಯಾರೊಬ್ಬನು ನಿನ್ನನ್ನು ಎದುರಿಸಿ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು. ನಿನ್ನನ್ನು ಕೈಬಿಡುವುದಿಲ್ಲ, ನಿನ್ನನ್ನು ತೊರೆದುಬಿಡುವುದಿಲ್ಲ.</verse>
				<verse number="6">“ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಜರಿಗೆ ಪ್ರಮಾಣ ಮಾಡಿಕೊಟ್ಟ ನಾಡನ್ನು ಇವರಿಗೆ ಸ್ವಾಧೀನಪಡಿಸಬೇಕಾದವನು ನೀನೇ.</verse>
				<verse number="7">ನನ್ನ ದಾಸನಾದ ಮೋಶೆ ನಿನಗೆ ಬೋಧಿಸಿದ ಧರ್ಮೋಪದೇಶವನ್ನು ಮಾತ್ರ ಧೈರ್ಯಸ್ಥೈರ್ಯದಿಂದ ಪರಿಪಾಲಿಸು. ಅದನ್ನು ಬಿಟ್ಟು ಎಡಕ್ಕಾಗಲಿ, ಬಲಕ್ಕಾಗಲಿ ಹೋಗಬೇಡ. ಆಗ ನೀನು ಎಲ್ಲಿಹೋದರೂ ಕೃತಾರ್ಥನಾಗುವೆ.</verse>
				<verse number="8">ಈ ಧರ್ಮಶಾಸ್ತ್ರ ಸದಾ ನಿನ್ನ ಬಾಯಲ್ಲಿರಲಿ. ಹಗಲಿರುಳು ಅದನ್ನು ಧ್ಯಾನಿಸು. ಅದರಲ್ಲಿ ಬರೆದಿರುವುದನ್ನೆಲ್ಲಾ ಕೈಗೊಂಡು ನಡೆ. ಆಗ ನಿನ್ನ ಕಾರ್ಯವೆಲ್ಲಾ ಕೈಗೂಡುವುದು. ನೀನು ಕೃತಾರ್ಥನಾಗುವೆ.</verse>
				<verse number="9">ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವ ಎಡೆಗಳಲ್ಲೆಲ್ಲ ನಿನ್ನ ದೇವರೂ ಸರ್ವೇಶ್ವರನೂ ಆದ ನಾನು ನಿನ್ನ ಸಂಗಡ ಇರುತ್ತೇನೆ,” ಎಂದು ಹೇಳಿದರು.</verse>
				<verse number="10">ಆಗ ಯೆಹೋಶುವ ಜನಾಧಿಪತಿಗಳಿಗೆ,</verse>
				<verse number="11">“ನೀವು ಪಾಳೆಯದ ಎಲ್ಲೆಡೆಗೆ ಹೋಗಿ ಜನರಿಗೆ, ‘ನೀವು ಇನ್ನು ಮೂರು ದಿನಗಳಲ್ಲಿ ಈ ಜೋರ್ಡನ್ ನದಿಯನ್ನು ದಾಟಿ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಸ್ವಂತ ಸೊತ್ತಾಗಿ ಕೊಡುವ ನಾಡನ್ನು ವಶಪಡಿಸಿಕೊಳ್ಳಲು ಹೋಗಬೇಕು. ಆದುದರಿಂದ ನಿಮಗೆ ಬೇಕಾದ ಆಹಾರ ಪದಾರ್ಥಗಳನ್ನು ಸಿದ್ಧಮಾಡಿಕೊಳ್ಳಿ’ ಎಂದು ತಿಳಿಸಿರಿ,” ಎಂದನು.</verse>
				<verse number="12">ಬಳಿಕ ರೂಬೇನ್ಯರಿಗೂ ಗಾದ್ಯರಿಗೂ ಹಾಗು ಮನಸ್ಸೆಕುಲದ ಅರ್ಧಜನರಿಗೂ ಯೆಹೋಶುವನು ಹೇಳಿದ್ದೇನೆಂದರೆ:</verse>
				<verse number="13">“ಸರ್ವೇಶ್ವರ ಸ್ವಾಮಿಯ ದಾಸ ಮೋಶೆ ನಿಮಗೆ ಆಜ್ಞಾಪಿಸಿದ್ದನ್ನು ನೆನಪಿಗೆ ತಂದುಕೊಳ್ಳಿ: ನಿಮ್ಮ ದೇವರಾದ ಸರ್ವೇಶ್ವರ ಈ ನಾಡನ್ನು ನಿಮಗೆ ಕೊಟ್ಟು ನೆಮ್ಮದಿಯನ್ನು ಉಂಟುಮಾಡಿದ್ದಾರೆ.</verse>
				<verse number="14">ನಿಮ್ಮ ಮಡದಿಮಕ್ಕಳು ಮತ್ತು ದನಕುರಿಗಳು ಮೋಶೆ ನಿಮಗೆ ಜೋರ್ಡನಿನ ಆಚೆ ಕೊಟ್ಟ ನಾಡಿನಲ್ಲೇ ಇರಲಿ. ಆದರೆ ನಿಮ್ಮ ಯೋಧರೆಲ್ಲರು ಯುದ್ಧಸನ್ನದ್ಧರಾಗಿ ನಿಮ್ಮ ಸಹೋದರರಿಗೆ ಮುಂದಾಗಿ ಹೊರಟು, ನದಿದಾಟಿ, ಅವರಿಗೆ ನೆರವಾಗಬೇಕು.</verse>
				<verse number="15">ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಹಾಗೆಯೇ ನಿಮ್ಮ ಸಹೋದರರನ್ನೂ ನೆಮ್ಮದಿಪಡಿಸಿ, ಸರ್ವೇಶ್ವರನಾದ ದೇವರು ತಮಗೆ ನೀಡುವ ನಾಡನ್ನು ಅವರು ಸ್ವತಂತ್ರಿಸಿಕೊಳ್ಳುವ ವರೆಗೆ ಅವರಿಗೆ ಸಹಾಯ ಮಾಡಲಿ. ತರುವಾಯ ಸರ್ವೇಶ್ವರನ ದಾಸ ಮೋಶೆ ಜೋರ್ಡನ್ನಿಗೆ ಈಚೆ ಸೂರ್ಯೋದಯದ ದಿಕ್ಕಿನಲ್ಲಿ, ನಿಮಗೆ ಕೊಟ್ಟ ಸ್ವಂತ ನಾಡಿಗೆ ಹಿಂದಿರುಗಿ ಬಂದು ಅದನ್ನು ಅನುಭವಿಸಬಹುದು.”</verse>
				<verse number="16">ಅವರು ಯೆಹೋಶುವನಿಗೆ, “ನೀವು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡುತ್ತೇವೆ. ಎಲ್ಲಿಗೆ ಕಳಿಸಿದರೂ ಹೋಗುತ್ತೇವೆ.</verse>
				<verse number="17">ಮೋಶೆಯ ಮಾತುಗಳನ್ನೆಲ್ಲ ಕೇಳಿದಂತೆ ನಿಮ್ಮ ಮಾತುಗಳನ್ನೂ ಕೇಳುತ್ತೇವೆ. ದೇವರಾದ ಸರ್ವೇಶ್ವರ ಮೋಶೆಯ ಸಂಗಡ ಇದ್ದ ಹಾಗೆ ನಿಮ್ಮ ಸಂಗಡವೂ ಇರಲಿ.</verse>
				<verse number="18">ನಿಮ್ಮ ಆಜ್ಞೆಗಳಲ್ಲಿ ಒಂದನ್ನಾದರೂ ಅಲಕ್ಷ್ಯಮಾಡಿ ನಿಮ್ಮ ವಿಧಿಗಳನ್ನು ಎದುರಿಸುವವನು ಮರಣ ದಂಡನೆಗೆ ಗುರಿಯಾಗತಕ್ಕವನು. ಆದುದರಿಂದ ಧೈರ್ಯಸ್ಥೈರ್ಯದಿಂದಿರಿ,” ಎಂದರು.</verse>
			</chapter>
			<chapter number="2">
				<verse number="1">ನೂನನ ಮಗನಾದ ಯೆಹೋಶುವನು ಕಾನಾನ್ ನಾಡನ್ನೂ ಜೆರಿಕೋ ನಗರವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟುಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.</verse>
				<verse number="2">ಇಸ್ರಯೇಲಿನ ಕೆಲವು ಜನರು ನಮ್ಮ ನಾಡಿನಲ್ಲಿ ಸಂಚರಿಸಿ ನೋಡಲು ಈ ರಾತ್ರಿ ನಗರಕ್ಕೆ ಬಂದಿದ್ದಾರೆಂದು ಜೆರಿಕೋವಿನ ಅರಸನಿಗೆ ತಿಳಿಸಲಾಯಿತು.</verse>
				<verse number="3">ಅವನು ರಾಹಾಬಳಿಗೆ, “ನಿನ್ನ ಮನೆಯಲ್ಲಿ ಇಳಿದುಕೊಂಡಿರುವ ಆ ವ್ಯಕ್ತಿಗಳನ್ನು ತಂದೊಪ್ಪಿಸು. ಅವರು ನಾಡನ್ನೆಲ್ಲಾ ಸಂಚರಿಸಿ ಬೇಹು ಮಾಡಲು ಬಂದವರು” ಎಂದು ಹೇಳಿ ಕಳಿಸಿದನು.</verse>
				<verse number="4">ವೇಶ್ಯೆ ಆ ಇಬ್ಬರನ್ನು ಅಡಗಿಸಿಟ್ಟು, ಕೇಳಲು ಬಂದವರಿಗೆ, “ಆ ವ್ಯಕ್ತಿಗಳು ನನ್ನ ಬಳಿಗೆ ಬಂದದ್ದೇನೋ ನಿಜ. ಅವರು ಎಲ್ಲಿಯವರೆಂದು ನನಗೆ ತಿಳಿಯದೆ ಹೋಗಿದೆ.</verse>
				<verse number="5">ಊರಬಾಗಿಲನ್ನು ಮುಚ್ಚುವ ಹೊತ್ತಿಗೆ ಕತ್ತಲಲ್ಲಿ ಹೊರಟುಹೋದರು. ಎಲ್ಲಿಗೆ ಹೋದರೆಂಬುದೂ ನನಗೆ ಗೊತ್ತಿಲ್ಲ. ಬೇಗನೆ ಅವರ ಬೆನ್ನಟ್ಟಿರಿ. ಅವರು ನಿಮಗೆ ಸಿಕ್ಕುವರು,” ಎಂದು ಹೇಳಿದಳು.</verse>
				<verse number="6">ಆದರೆ ಅವಳು ಆ ವ್ಯಕ್ತಿಗಳನ್ನು ಮಾಳಿಗೆಯ ಮೇಲೆ ಹತ್ತಿಸಿ, ಅಲ್ಲಿ ಸಾಲಾಗಿ ಇಟ್ಟಿದ್ದ ಸೆಣಬಿನ ಹೊರೆಗಳೊಳಗೆ ಬಚ್ಚಿಟ್ಟಿದ್ದಳು.</verse>
				<verse number="7">ಅರಸನ ಆಳುಗಳು ಜೋರ್ಡನ್ ದಾರಿ ಹಿಡಿದು ಹೋಗಿ ನದಿದಾಟುವ ಸ್ಥಳದವರೆಗೂ ಹುಡುಕಿದರು. ಹುಡುಕುವವರು ಹೊರಟಕೂಡಲೆ ಊರಬಾಗಿಲನ್ನು ಮುಚ್ಚಲಾಯಿತು.</verse>
				<verse number="8">ಆ ಗೂಢಚಾರರು ಮಲಗಿಕೊಳ್ಳುವ ಮೊದಲೇ ಆಕೆ ಮಾಳಿಗೆ ಹತ್ತಿ, ಅವರ ಬಳಿಗೆ ಬಂದು,</verse>
				<verse number="9">“ಸರ್ವೇಶ್ವರ ಈ ನಾಡನ್ನು ನಿಮಗೆ ಕೊಟ್ಟಿದ್ದಾರೆಂದು ನಾನು ಬಲ್ಲೆ; ನಿಮ್ಮ ವಿಷಯದಲ್ಲಿ ನಮಗೆ ಮಹಾಭೀತಿ ಉಂಟಾಗಿದೆ. ನಾಡಿನ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆ.</verse>
				<verse number="10">ನೀವು ಈಜಿಪ್ಟಿನಿಂದ ಹೊರಟುಬಂದ ಮೇಲೆ ಸರ್ವೇಶ್ವರ ನಿಮ್ಮ ಮುಂದೆ ಕೆಂಪುಸಮುದ್ರವನ್ನು ಬತ್ತಿಸಿಬಿಟ್ಟರೆಂದು ಕೇಳಿದ್ದೇವೆ. ಅಲ್ಲದೆ ಜೋರ್ಡನ್ನಿನ ಆಚೆ ಇರುವ ಅಮೋರಿಯರ ಅರಸರಿಬ್ಬರನ್ನು ಅಂದರೆ, ಸೀಹೋನ್ ಮತ್ತು ಓಗ್ ಎಂಬವರನ್ನು ನೀವು ನಾಶಮಾಡಿದಿರೆಂದು ಕೇಳಿದ್ದೇವೆ.</verse>
				<verse number="11">ಇದನ್ನೆಲ್ಲಾ ಕೇಳಿ ನಮ್ಮ ಎದೆ ಒಡೆದುಹೋಗಿದೆ. ನಿಮ್ಮನ್ನು ಎದುರಿಸುವ ಧೈರ್ಯ ಯಾರಿಗೂ ಇಲ್ಲ. ನಿಮ್ಮ ದೇವರಾದ ಸರ್ವೇಶ್ವರರೊಬ್ಬರೇ ಪರಲೋಕದಲ್ಲೂ ಭೂಲೋಕದಲ್ಲೂ ದೇವರು.</verse>
				<verse number="12">ಆದುದರಿಂದ ಈಗ ನೀವು ನನಗೆ ನಂಬತಕ್ಕ ಒಂದು ಗುರುತನ್ನು ಕೊಡಬೇಕು. ನಾನು ನಿಮಗೆ ದಯೆ ತೋರಿದಂತೆ ನೀವೂ ನನ್ನ ತಂದೆಯ ಮನೆಯವರಿಗೆ ದಯೆ ತೋರಬೇಕು.</verse>
				<verse number="13">ನನ್ನ ತಂದೆ ತಾಯಿಗಳನ್ನೂ ಸಹೋದರ ಸಹೋದರಿಯರನ್ನೂ ಅವರಿಗಿರುವುದೆಲ್ಲವನ್ನೂ ನಾಶಮಾಡದೆ ಉಳಿಸುವುದಾಗಿ ಸರ್ವೇಶ್ವರನ ಹೆಸರಿನಲ್ಲಿ ಪ್ರಮಾಣ ಮಾಡಬೇಕೆಂದು ಬೇಡಿಕೊಳ್ಳುತ್ತೇನೆ,” ಎಂದಳು</verse>
				<verse number="14">ಆಗ ಆ ಗೂಢಚಾರರು, “ನೀವು ನಮ್ಮ ಸಂಗತಿಯನ್ನು ಹೊರಪಡಿಸದಿದ್ದರೆ, ನಾವು ನಿಮ್ಮ ಪ್ರಾಣಕ್ಕೆ ಹೊಣೆಯಾಗಿರುತ್ತೇವೆ. ಸರ್ವೇಶ್ವರಸ್ವಾಮಿ ಈ ನಾಡನ್ನು ನಮಗೆ ಅನುಗ್ರಹಿಸಿದ ಮೇಲೆ ನಾವು ಕೊಟ್ಟ ಮಾತಿನಂತೆ ದಯೆಯಿಂದ ನಡೆದುಕೊಳ್ಳುತ್ತೇವೆ,” ಎಂದರು.</verse>
				<verse number="15">ಅವಳ ಮನೆ ಊರಗೋಡೆಯ ಮೇಲಿತ್ತು. ಆದ್ದರಿಂದ ಅವರನ್ನು ಹಗ್ಗದ ಮೂಲಕ ಕಿಟಕಿಯಿಂದ ಕೆಳಕ್ಕೆ ಇಳಿಸಿದಳು.</verse>
				<verse number="16">ಅಲ್ಲದೆ ಅವರಿಗೆ, “ನಿಮ್ಮನ್ನು ಹಿಂದಟ್ಟುವವರಿಗೆ ನೀವು ಸಿಕ್ಕದಂತೆ ಆ ಬೆಟ್ಟಕ್ಕೆ ಓಡಿಹೋಗಿ, ಮೂರು ದಿನ ಅವಿತುಕೊಂಡಿರಿ. ಅವರು ಹಿಂದಿರುಗಿದ ಮೇಲೆ ನಿಮ್ಮ ದಾರಿ ಹಿಡಿದು ಹೋಗಿ,” ಎಂದಳು.</verse>
				<verse number="17">ಆಗ ಅವರು ಆಕೆಗೆ, “ನೀನು ನಮ್ಮಿಂದ ಮಾಡಿಸಿದ ಪ್ರಮಾಣದಂತೆ ನಡೆದುಕೊಳ್ಳುತ್ತೇವೆ.</verse>
				<verse number="18">ನಾವು ಈ ನಾಡನ್ನು ಪ್ರವೇಶಿಸುವಾಗ ನೀನು ನಮ್ಮನ್ನು ಇಳಿಸಿದ ಕಿಟಕಿಗೆ ಈ ಕೆಂಪುದಾರವನ್ನು ಕಟ್ಟಬೇಕು ಮತ್ತು ನಿನ್ನ ತಂದೆತಾಯಿಗಳನ್ನು, ಅಣ್ಣತಮ್ಮಂದಿರನ್ನು, ಎಲ್ಲಾ ಬಂಧುಬಳಗದವರನ್ನು ನಿನ್ನ ಮನೆಯಲ್ಲೇ ಸೇರಿಸಿಕೊಂಡಿರಬೇಕು.</verse>
				<verse number="19">ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ಅವರ ಮರಣಕ್ಕೆ ಅವರೇ ಕಾರಣರು ಆಗುವರು. ಅದಕ್ಕೆ ನಾವು ಹೊಣೆಗಾರರಲ್ಲ. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ ಯಾರಾದರೂ ಕೈಮಾಡಿದ್ದಾದರೆ ಆ ರಕ್ತಾಪರಾಧ ನಮ್ಮ ತಲೆಯ ಮೇಲಿರುವುದು.</verse>
				<verse number="20">ನೀನೇನಾದರೂ ಈ ನಮ್ಮ ವಿಷಯವನ್ನು ಬಹಿರಂಗಪಡಿಸಿದ್ದೇ ಆದರೆ ನಮ್ಮಿಂದ ಮಾಡಿಸಿದ ಪ್ರಮಾಣದಿಂದ ನಾವು ಬಿಡುಗಡೆಯಾಗಿರುತ್ತೇವೆ,” ಎಂದು ಹೇಳಿದರು.</verse>
				<verse number="21">ಅದಕ್ಕವಳು, “ನಿಮ್ಮ ಮಾತಿನಂತೆಯೇ ಆಗಲಿ,” ಎಂದು ಹೇಳಿ ಅವರನ್ನು ಕಳುಹಿಸಿದಳು. ಅವರು ಹೊರಟುಹೋದ ಮೇಲೆ ಆ ಕೆಂಪುದಾರವನ್ನು ಕಿಟಕಿಗೆ ಕಟ್ಟಿದಳು.</verse>
				<verse number="22">ಗೂಢಚಾರರು ಆ ಬೆಟ್ಟವನ್ನು ಸೇರಿ ಬೆನ್ನಟ್ಟುವವರು ಹಿಂದಿರುಗುವ ತನಕ ಮೂರು ದಿನ ಅಲ್ಲೇ ತಂಗಿದ್ದರು. ಬೆನ್ನಟ್ಟುವವರು ಅವರನ್ನು ದಾರಿಯುದ್ದಕ್ಕೂ ಹುಡುಕಿ ಕಾಣದೆ ಹಿಂದಿರುಗಿದರು.</verse>
				<verse number="23">ಆಗ ಅವರಿಬ್ಬರೂ ಬೆಟ್ಟದಿಂದಿಳಿದು, ನದಿದಾಟಿ, ನೂನನ ಮಗ ಯೆಹೋಶುವನ ಬಳಿಗೆ ಬಂದು ತಮಗೆ ಸಂಭವಿಸಿದ್ದನ್ನೆಲ್ಲಾ ತಿಳಿಸಿದರು.</verse>
				<verse number="24">ಇದಲ್ಲದೆ, ಅವರು ಯೆಹೋಶುವನಿಗೆ, “ಸರ್ವೇಶ್ವರಸ್ವಾಮಿ ನಿಜವಾಗಿ ಈ ನಾಡನ್ನೆಲ್ಲಾ ನಮಗೆ ಕೊಟ್ಟಿದ್ದಾರೆ. ಅದರ ನಿವಾಸಿಗಳೆಲ್ಲ ನಮ್ಮನ್ನು ಕಂಡು ನಡುಗುತ್ತ ಇದ್ದಾರೆ,” ಎಂದು ತಿಳಿಸಿದರು.</verse>
			</chapter>
			<chapter number="3">
				<verse number="1">ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು. ಅವನೊಂದಿಗೆ ಇಸ್ರಯೇಲರು ಎಲ್ಲರೂ ಶಿಟ್ಟೀಮನ್ನು ಬಿಟ್ಟು ಜೋರ್ಡನ್ನಿನ ಹತ್ತಿರಕ್ಕೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು.</verse>
				<verse number="2">ಮೂರು ದಿನಗಳಾದ ಮೇಲೆ ಜನನಾಯಕರು ಪಾಳೆಯದ ಎಲ್ಲಾ ಕಡೆಗೂ ಹೋಗಿ ಜನರಿಗೆ,</verse>
				<verse number="3">“ನಿಮ್ಮ ದೇವರಾದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಯಾಜಕರಾದ ಲೇವಿಯರು ಹೊತ್ತಿರುವುದನ್ನು ನೀವು ಕಂಡಕೂಡಲೆ ನೀವು ಕೂಡ ನಿಮ್ಮ ನಿಮ್ಮ ಸ್ಥಳವನ್ನು ಬಿಟ್ಟು ಅದರ ಹಿಂದೆ ಹೋಗಿ.</verse>
				<verse number="4">ಆದರೆ ಅದರ ಹತ್ತಿರ ನೀವು ಹೋಗಬಾರದು. ನಿಮಗೂ ಮಂಜೂಷಕ್ಕೂ ಸುಮಾರು ಒಂದು ಕಿಲೋಮೀಟರ್ ಅಂತರವಿರಬೇಕು. ಹೀಗೆ ನೀವು ಹೋಗಬೇಕಾದ ಮಾರ್ಗ ನಿಮಗೆ ಗೊತ್ತಾಗುವುದು. ಏಕೆಂದರೆ ನೀವು ಆ ಮಾರ್ಗವಾಗಿ ಇಲ್ಲಿಯವರೆಗೆ ಪ್ರಯಾಣ ಮಾಡಿದ್ದಿಲ್ಲ,” ಎಂದು ತಿಳಿಸಿದರು.</verse>
				<verse number="5">ಇದಲ್ಲದೆ, ಯೆಹೋಶುವನು ಜನರಿಗೆ, “ಸರ್ವೇಶ್ವರ ನಾಳೆ ನಿಮ್ಮ ಮಧ್ಯೆ ಅದ್ಭುತಗಳನ್ನು ಮಾಡಲಿದ್ದಾರೆ. ಆದುದರಿಂದ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ,” ಎಂದು ಹೇಳಿದನು.</verse>
				<verse number="6">ಯಾಜಕರಿಗೆ, “ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಜನರ ಮುಂದಾಗಿ ನಡೆದು ನದಿದಾಟಿರಿ,” ಎಂದು ಆಜ್ಞಾಪಿಸಿದನು. ಅವರು ಅಂತೆಯೇ ಮಂಜೂಷವನ್ನು ಹೊತ್ತುಕೊಂಡು ಹೋದರು.</verse>
				<verse number="7">ಆಗ ಸರ್ವೇಶ್ವರ, ಯೆಹೋಶುವನಿಗೆ: “ನಾನು ಇಂದಿನಿಂದ ನಿನ್ನನ್ನು ಇಸ್ರಯೇಲರ ಮುಂದೆ ಮಹಾತ್ಮನನ್ನಾಗಿಸುವೆನು. ನಾನು ಮೋಶೆಯ ಸಂಗಡ ಇದ್ದಹಾಗೆ ನಿನ್ನ ಸಂಗಡವೂ ಇರುವೆನೆಂದು ಅವರಿಗೆ ಗೊತ್ತಾಗುವುದು.</verse>
				<verse number="8">ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನ್ ನದಿಯ ಅಂಚಿಗೆ ಬಂದ ಕೂಡಲೆ ಅಲ್ಲೇ ನಿಲ್ಲಬೇಕೆಂದು ಆಜ್ಞಾಪಿಸು,” ಎಂದರು.</verse>
				<verse number="9">ಆಗ ಯೆಹೋಶುವನು ಇಸ್ರಯೇಲರಿಗೆ, “ಇಲ್ಲಿಗೆ ಬಂದು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಮಾತುಗಳನ್ನು ಕೇಳಿ:</verse>
				<verse number="10">ಚೈತನ್ಯಸ್ವರೂಪನಾದ ದೇವರು ನಿಮ್ಮ ಮಧ್ಯೆ ಇದ್ದಾರೆಂದು ನಿಮಗೆ ಈಗ ತಿಳಿಯುವುದು. ಅದೇ ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು ಹಾಗೂ ಯೆಬೂಸಿಯರನ್ನು ನಿಮ್ಮ ಮುಂದಿನಿಂದ ಓಡಿಸಿಬಿಡುವರೆಂದು ನಿಮಗೆ ಗೊತ್ತಾಗುವುದು.</verse>
				<verse number="11">ಹೇಗೆಂದರೆ - ಸರ್ವಲೋಕದ ಒಡೆಯನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದಾಗಿ ಹೋಗಿ ಜೋರ್ಡನಿನಲ್ಲಿ ಇಳಿಯುವುದು.</verse>
				<verse number="12">ಆಗ ನೀವು ಇಸ್ರಯೇಲ್ ಕುಲಗಳಿಂದ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಳ್ಳಬೇಕು.</verse>
				<verse number="13">ಸರ್ವಲೋಕದ ಒಡೆಯನಾದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊರುವ ಯಾಜಕರು ತಮ್ಮ ಕಾಲುಗಳನ್ನು ಜೋರ್ಡನ್ ನದಿಯ ನೀರಿನಲ್ಲಿ ಇಡುತ್ತಲೇ ಮೇಲಿಂದ ಹರಿದುಬರುವ ನೀರು ಮುಂದೆ ಸಾಗದೆ ಅಲ್ಲೇ ರಾಶಿಯಾಗಿ ನಿಂತುಕೊಳ್ಳುವುದು,” ಎಂದು ತಿಳಿಸಿದನು.</verse>
				<verse number="14">ಜನರು ಜೋರ್ಡನ್ ನದಿಯನ್ನು ದಾಟಲು ತಮ್ಮ ತಮ್ಮ ಡೇರೆಗಳಿಂದ ಹೊರಟರು. ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಅವರ ಮುಂದೆ ಇದ್ದರು.</verse>
				<verse number="15">ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿಗೆ ಬಂದರು. ಅದು ಸುಗ್ಗಿಯ ಕಾಲ ನದಿ ದಡಮೀರಿ ಹರಿಯುತ್ತಿತ್ತು. ಯಾಜಕರು ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಹರಿಯುತ್ತಿದ್ದ ಜೋರ್ಡನ್ ನದಿಯ ನೀರು ನಿಂತುಹೋಯಿತು.</verse>
				<verse number="16">ಮೇಲಿಂದ ಬರುತ್ತಿದ್ದ ನೀರು ಬಹು ದೂರದಲ್ಲಿದ್ದ ಚಾರೆತಾನಿನ ಬಳಿಯಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಿನ ನೀರು ಅರಾಬಾ ತಗ್ಗಿನಲ್ಲಿರುವ ಲವಣಸಮುದ್ರಕ್ಕೆ ಹರಿದುಹೋಯಿತು. ಜನರು ಜೆರಿಕೋವಿನ ಎದುರಿನಲ್ಲಿ ನದಿ ದಾಟಿದರು.</verse>
				<verse number="17">ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿನ ನಡುವೆ ನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಯೇಲರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಹೀಗೆ ಜನರೆಲ್ಲರೂ ಜೋರ್ಡನಿನ ಆಚೆಗೆ ಸೇರಿದರು.</verse>
			</chapter>
			<chapter number="4">
				<verse number="1">ಜನರೆಲ್ಲರು ಜೋರ್ಡನಿನ ಆಚೆ ಕಡೆಗೆ ಸೇರಿದ ಮೇಲೆ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ ಹೀಗೆಂದರು:</verse>
				<verse number="2">“ಜನರಲ್ಲಿ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊ.</verse>
				<verse number="3">ಅವರಿಗೆ, ‘ನೀವು ಜೋರ್ಡನಿನ ಮಧ್ಯದಲ್ಲಿ ಯಾಜಕರು ನಿಂತ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ, ಅವುಗಳನ್ನು ನಿಮ್ಮ ಸಂಗಡ ಈಚೆ ದಡಕ್ಕೆ ತಂದು ನೀವು ಈ ರಾತ್ರಿ ತಂಗುವ ಸ್ಥಳದಲ್ಲಿ ನಿಲ್ಲಿಸಿ’ ಎಂದು ಆಜ್ಞಾಪಿಸು,” ಎಂದರು.</verse>
				<verse number="4">ಆಗ ಯೆಹೋಶುವನು ತಾನು ಇಸ್ರಯೇಲರಿಂದ ಕುಲಕ್ಕೆ ಒಬ್ಬನಂತೆ ಆರಿಸಿಕೊಂಡ ಹನ್ನೆರಡು ಮಂದಿಯನ್ನು ಕರೆದು ಅವರಿಗೆ,</verse>
				<verse number="5">“ನೀವು ನಮ್ಮ ದೇವರಾದ ಸರ್ವೇಶ್ವರನ ಮಂಜೂಷದ ಮುಂದಾಗಿ ಜೋರ್ಡನಿನ ಮಧ್ಯಕ್ಕೆ ಹೋಗಿ ಇಸ್ರಯೇಲ್ ಕುಲಗಳ ಸಂಖ್ಯೆಗೆ ಸರಿಯಾಗಿ ಪ್ರತಿಯೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿ.</verse>
				<verse number="6">ಅವು ನಿಮ್ಮ ಮಧ್ಯೆ ಸ್ಮಾರಕ ಆಗಿರುವುವು. ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು, ‘ಈ ಕಲ್ಲುಗಳು ಏನನ್ನು ಸೂಚಿಸುತ್ತವೆ?’ ಎಂದು ಕೇಳುವಾಗ ನೀವು ಅವರಿಗೆ,</verse>
				<verse number="7">‘ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಜೋರ್ಡನನ್ನು ದಾಟುವಾಗ ಅದರ ಮುಂದೆ ಜೋರ್ಡನಿನ ನೀರು ನಿಂತುಹೋಯಿತು,’ ಎಂದು ಹೇಳಿರಿ. ಅದರ ನೀರು ನಿಂತುಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಯೇಲರಿಗೆ ಚಿರಸ್ಮಾರಕಗಳಾಗಿರುವುವು,” ಎಂದು ಹೇಳಿದನು.</verse>
				<verse number="8">ಇಸ್ರಯೇಲರು ಯೆಹೋಶುವನು ಆಜ್ಞಾಪಿಸಿದಂತೆಯೇ ಮಾಡಿದರು. ಸರ್ವೇಶ್ವರಸ್ವಾಮಿ ಯೆಹೋಶುವನಿಗೆ ಹೇಳಿದ ಪ್ರಕಾರ ಅವರು ಇಸ್ರಯೇಲರ ಸಂಖ್ಯೆಗೆ ಅನುಸಾರವಾಗಿ ಜೋರ್ಡನಿನ ಮಧ್ಯದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ತಮ್ಮ ಬಿಡಾರದ ಸ್ಥಳಕ್ಕೆ ತಂದು ಅಲ್ಲಿ ಅವುಗಳನ್ನು ನಿಲ್ಲಿಸಿದರು.</verse>
				<verse number="9">ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಜೋರ್ಡನಿನ ಮಧ್ಯೆ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲೇ ಇವೆ.</verse>
				<verse number="10">ಮೋಶೆ ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ ಸರ್ವೇಶ್ವರನ ಅಪ್ಪಣೆಗಳನ್ನೆಲ್ಲ ಅವರು ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿನ ಮಧ್ಯದಲ್ಲೇ ನಿಂತರು.</verse>
				<verse number="11">ಜನರು ಬೇಗನೆ ನದಿ ದಾಟಿದರು. ಅವರೆಲ್ಲರು ಆಚೆಗೆ ಸೇರಿದ ಮೇಲೆ ಯಾಜಕರು ಸರ್ವೇಶ್ವರನ ಮಂಜೂಷದೊಡನೆ ನದಿ ದಾಟಿ ಜನರ ಮುಂದುಗಡೆಯೇ ಹೋದರು.</verse>
				<verse number="12">ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆ ಕುಲದ ಅರ್ಧಜನರು ಮೋಶೆ ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ಧರಾಗಿ ಮಿಕ್ಕ ಇಸ್ರಯೇಲರಿಗಿಂತ ಮುಂದಾಗಿ ಹೊರಟು ನದಿ ದಾಟಿದರು.</verse>
				<verse number="13">ಸುಮಾರು ನಾಲ್ವತ್ತು ಸಾವಿರ ಯೋಧರಿಂದ ಕೂಡಿದ ಅವರು ಸರ್ವೇಶ್ವರನ ಸಮ್ಮುಖದಲ್ಲಿ ನದಿ ದಾಟಿ ಯುದ್ಧ ಮಾಡುವುದಕ್ಕಾಗಿ ಜೆರಿಕೋವಿನ ಬಯಲಿಗೆ ಬಂದರು.</verse>
				<verse number="14">ಆ ದಿನ ಸರ್ವೇಶ್ವರ ಯೆಹೋಶುವನನ್ನು ಇಸ್ರಯೇಲರೆಲ್ಲರ ದೃಷ್ಟಿಯಲ್ಲಿ ಇಷ್ಟು ಘನಪಡಿಸಿದ್ದರಿಂದ ಅವರು ಮೋಶೆಯಲ್ಲಿ ಹೇಗೋ ಹಾಗೆಯೇ ಇವನಲ್ಲಿಯೂ, ಇವನು ಜೀವದಿಂದಿದ್ದ ಕಾಲವೆಲ್ಲ ಗೌರವವುಳ್ಳವರು ಆಗಿದ್ದರು.</verse>
				<verse number="15">ಸರ್ವೇಶ್ವರ ಯೆಹೋಶುವನಿಗೆ:</verse>
				<verse number="16">“ಆಜ್ಞಾಶಾಸನಗಳ ಮಂಜೂಷವನ್ನು ಹೊತ್ತ ಯಾಜಕರಿಗೆ ಜೋರ್ಡನಿನಿಂದ ಮೇಲೆ ಬರಬೇಕೆಂದು ಆಜ್ಞಾಪಿಸು,” ಎಂದರು.</verse>
				<verse number="17">ಆತ ಅವರಿಗೆ ಅಂತೆಯೇ ವಿಧಿಸಿದನು.</verse>
				<verse number="18">ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಜೋರ್ಡನಿನಿಂದ ಮೇಲೆ ಬಂದು ಒಣನೆಲದಲ್ಲಿ ಕಾಲಿಟ್ಟ ಕೂಡಲೇ ನೀರು ಮುಂಚಿನಂತೆ ಬಂದು ಜೋರ್ಡನ್ ನದಿಯ ದಡಮೀರಿ ಹರಿಯಿತು.</verse>
				<verse number="19">ಜನರು ಮೊದಲನೇ ತಿಂಗಳಿನ ಹತ್ತನೆಯ ದಿನ ಜೋರ್ಡನನ್ನು ದಾಟಿ ಜೆರಿಕೋವಿನ ಪೂರ್ವಗಡಿಯಲ್ಲಿರುವ ಗಿಲ್ಗಾಲೆಂಬಲ್ಲಿಗೆ ಬಂದು ತಂಗಿದರು.</verse>
				<verse number="20">ಯೆಹೋಶುವನು ಜೋರ್ಡನಿನಿಂದ ತೆಗೆದುಕೊಂಡು ಬಂದ ಹನ್ನೆರಡು ಕಲ್ಲುಗಳನ್ನು ಗಿಲ್ಗಾಲಿನಲ್ಲೇ ನಿಲ್ಲಿಸಿದನು.</verse>
				<verse number="21">ಆತ ಇಸ್ರಯೇಲರಿಗೆ, “ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ಈ ಕಲ್ಲುಗಳನ್ನು ಏಕೆ ನೆಟ್ಟಿದ್ದಾರೆಂದು ಕೇಳಿದರೆ ನೀವು ಅವರಿಗೆ,</verse>
				<verse number="22">‘ಇಸ್ರಯೇಲರು ಒಣನೆಲವಾಗಿದ್ದ ಈ ಜೋರ್ಡನನ್ನು ದಾಟಿ ಬಂದುದಕ್ಕಾಗಿ’ ಎಂದು ಹೇಳಿ.</verse>
				<verse number="23">ನಿಮ್ಮ ದೇವರಾದ ಸರ್ವೇಶ್ವರ ನಮ್ಮ ಕಣ್ಮುಂದೆ ಕೆಂಪುಸಮುದ್ರವನ್ನು ಬತ್ತಿಸಿ, ನಮ್ಮನ್ನು ದಾಟಿಸಿದಂತೆ ಈಗ ನಿಮ್ಮ ಕಣ್ಮುಂದೆಯೇ ಈ ಜೋರ್ಡನನ್ನು ಬತ್ತಿಸಿ, ನಿಮ್ಮನ್ನು ದಾಟಿಸಿದ್ದಾರೆ.</verse>
				<verse number="24">ಇದರಿಂದ ಭೂನಿವಾಸಿಗಳೆಲ್ಲರು ಸರ್ವೇಶ್ವರನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವರು. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಯಾವಾಗಲೂ ಭಯಭಕ್ತಿಯುಳ್ಳವರಾಗಿರುವರು.</verse>
			</chapter>
			<chapter number="5">
				<verse number="1">ಜೋರ್ಡನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲ ಅರಸರು ಮತ್ತು ಸಮುದ್ರದ ಬಳಿಯಿದ್ದ ಸರ್ವ ಕಾನಾನ್ ರಾಜರು ಸರ್ವೇಶ್ವರ ಸ್ವಾಮಿ ಇಸ್ರಯೇಲರ ಕಣ್ಮುಂದೆಯೇ ಜೋರ್ಡನನ್ನು ಬತ್ತಿಸಿ ಆ ನದಿ ದಾಟಿಸಿದರೆಂದು ಕೇಳಿದರು. ಆಗ ಅವರ ಎದೆ ಒಡೆದುಕೋಯಿತು. ಇಸ್ರಯೇಲರ ಮುಂದೆ ಅವರಿಗೆ ಧೈರ್ಯವಿಲ್ಲದೆ ಹೋಯಿತು.</verse>
				<verse number="2">ಆಗ ಸರ್ವೇಶ್ವರ ಯೆಹೋಶುವನಿಗೆ, “ನೀನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಇಸ್ರಯೇಲರಿಗೆ ಸುನ್ನತಿ ಮಾಡು,” ಎಂದು ಹೇಳಿದರು.</verse>
				<verse number="3">ಅಂತೆಯೇ ಅವನು ಕಲ್ಲಿನ ಚೂರಿಗಳನ್ನು ಮಾಡಿಕೊಂಡು ಸುನ್ನತಿ ಗುಡ್ಡದಲ್ಲಿ ಇಸ್ರಯೇಲರಿಗೆ ಸುನ್ನತಿ ಮಾಡಿದನು.</verse>
				<verse number="4">ಹೀಗೆ ಯೆಹೋಶುವನು ಸುನ್ನತಿ ಮಾಡುವುದಕ್ಕೆ ಕಾರಣ ಏನೆಂದರೆ - ಈಜಿಪ್ಟಿನಿಂದ ಹೊರಟುಬಂದ ಗಂಡಸರಲ್ಲಿ ಯುದ್ಧವೀರರೆಲ್ಲರು ಆ ದೇಶವನ್ನು ಬಿಟ್ಟು, ಅನಂತರ ಅರಣ್ಯದಲ್ಲಿ ಸತ್ತುಹೋದರು.</verse>
				<verse number="5">ಅಲ್ಲಿಂದ ಬಂದ ಗಂಡಸರೆಲ್ಲರಿಗೆ ಸುನ್ನತಿ ಆಗಿತ್ತು. ಈಜಿಪ್ಟನ್ನು ಬಿಟ್ಟ ಅನಂತರ ಅರಣ್ಯ ಪ್ರಯಾಣದಲ್ಲಿ ಹುಟ್ಟಿದ ಗಂಡುಮಕ್ಕಳಿಗೆ ಸುನ್ನತಿಯಾಗಿರಲಿಲ್ಲ.</verse>
				<verse number="6">ಈಜಿಪ್ಟಿನಿಂದ ಬಂದ ಇಸ್ರಯೇಲರು ಸರ್ವೇಶ್ವರನ ಮಾತನ್ನು ಕೇಳದೆಹೋದುದರಿಂದ ಅವರು, ತಮ್ಮ ಯೋಧರೆಲ್ಲರು ಸಂಹಾರವಾಗುವ ತನಕ ನಾಲ್ವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಸರ್ವೇಶ್ವರ, ತಾವು ಅವರ ಪೂರ್ವಿಕರಿಗೆ ವಾಗ್ದಾನಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟಿದ್ದರು.</verse>
				<verse number="7">ಅವರಿಗೆ ಬದಲಾಗಿ ಹುಟ್ಟಿದ ಅವರ ಗಂಡುಮಕ್ಕಳಿಗೆ ಯೆಹೋಶುವ ಸುನ್ನತಿ ಮಾಡಿದನು. ದಾರಿಯಲ್ಲಿ ಯಾರೂ ಅವರಿಗೆ ಸುನ್ನತಿ ಮಾಡಿರಲಿಲ್ಲ. ಆದ್ದರಿಂದ ಅವರು ಸುನ್ನತಿಯಿಲ್ಲದವರಾಗಿದ್ದರು.</verse>
				<verse number="8">ಸುನ್ನತಿಯಾದ ಮೇಲೆ ವಾಸಿಯಾಗುವವರೆಗೆ ಜನರೆಲ್ಲರು ಪಾಳೆಯದ ತಮ್ಮ ತಮ್ಮ ಸ್ಥಳಗಳಲ್ಲೇ ಇದ್ದರು.</verse>
				<verse number="9">ಸರ್ವೇಶ್ವರ ಸ್ವಾಮಿ ಯೆಹೋಶುವನಿಗೆ, “ನಾನು ಈಜಿಪ್ಟಿನ ಕಳಂಕವನ್ನು ಈ ದಿನ ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆ,” ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲ್ ಎಂಬ ಹೆಸರಿಡಲಾಗಿದೆ.</verse>
				<verse number="10">ಇಸ್ರಯೇಲರು ಗಿಲ್ಗಾಲಿನಲ್ಲಿ ತಂಗಿದ್ದಾಗ ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ಜೆರಿಕೋವಿನ ಬಯಲಿನಲ್ಲಿ ಪಾಸ್ಕಹಬ್ಬವನ್ನಾಚರಿಸಿದರು.</verse>
				<verse number="11">ಮಾರನೆಯ ದಿನದಿಂದ ಕಾನಾನಿನ ಧಾನ್ಯವನ್ನು ಊಟಕ್ಕೆ ಬಳಸಲು ತೊಡಗಿದರು - ಹುಳಿಯಿಲ್ಲದ ರೊಟ್ಟಿಗಳನ್ನು ಮತ್ತು ಸುಟ್ಟ ತೆನೆಗಳನ್ನು ತಿನ್ನತೊಡಗಿದರು.</verse>
				<verse number="12">ಆ ನಾಡಿನ ಹುಟ್ಟುವಳಿಯನ್ನು ಊಟಮಾಡಿದ ಮರುದಿನವೇ ಮನ್ನವು ನಿಂತುಹೋಯಿತು. ಅದು ಅವರಿಗೆ ಮತ್ತೆ ಸಿಕ್ಕಲೇ ಇಲ್ಲ. ಇಸ್ರಯೇಲರು ಆ ವರ್ಷವೆಲ್ಲ ಕಾನಾನ್ ನಾಡಿನ ಉತ್ಪನ್ನವನ್ನೇ ಅನುಭವಿಸಿದರು.</verse>
				<verse number="13">ಯೆಹೋಶುವನು ಜೆರಿಕೋವಿಗೆ ಹತ್ತಿರವಿದ್ದಾಗ, ಒಮ್ಮೆ ಕಣ್ಣೆತ್ತಿ ನೋಡಿದನು. ಇಗೋ, ಒಬ್ಬ ವ್ಯಕ್ತಿ ಕಾಣಿಸಿಕೊಂಡನು. ಹಿರಿದ ಕತ್ತಿಯನ್ನು ಕೈಯಲ್ಲಿ ಹಿಡಿದು ನಿಂತಿದ್ದನು. ಯೆಹೋಶುವ ಅವನನ್ನು ಸಮೀಪಿಸಿ, “ನೀನು ನಮ್ಮವನೋ ಅಥವಾ ಶತ್ರು ಕಡೆಯವನೋ?” ಎಂದು ಕೇಳಿದನು.</verse>
				<verse number="14">ಆಗ ಆ ವ್ಯಕ್ತಿ, “ನಾನು ಅಂಥವನಲ್ಲ; ನಾನು ಸರ್ವೇಶ್ವರನ ಸೇನಾಪತಿ. ಇದೀಗಲೆ ಬಂದವನು,’ ಎಂದು ಉತ್ತರಿಸಿದನು. ಕೂಡಲೆ ಯೆಹೋಶುವ ಅವನಿಗೆ ಸಾಷ್ಟಾಂಗವೆರಗಿ, “ಒಡೆಯಾ, ತಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಎಂದನು.</verse>
				<verse number="15">ಆಗ ಸರ್ವೇಶ್ವರನ ಸೇನಾಪತಿ, “ನಿನ್ನ ಕಾಲಿನಿಂದ ಕೆರಗಳನ್ನು ತೆಗೆದುಹಾಕು. ಏಕೆಂದರೆ ನೀನು ನಿಂತಿರುವ ಸ್ಥಳ ಪವಿತ್ರವಾದುದು,” ಎಂದು ಹೇಳಿದನು. ಯೆಹೋಶುವ ಅಂತೆಯೇ ಮಾಡಿದನು.</verse>
			</chapter>
			<chapter number="6">
				<verse number="1">ಜೆರಿಕೋದ ಜನರು ಇಸ್ರಯೇಲರಿಗೆ ಹೆದರಿ ತಮ್ಮ ನಗರದ ಬಾಗಿಲುಗಳನ್ನು ಭದ್ರವಾಗಿ ಮುಚ್ಚಿದ್ದರು. ಯಾರೂ ಹೊರಗೆ ಬರುತ್ತಿರಲಿಲ್ಲ, ಒಳಗೆ ಹೋಗುತ್ತಿರಲಿಲ್ಲ.</verse>
				<verse number="2">ಆಗ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೋಡು, ನಾನು ಜೆರಿಕೋವನ್ನು, ಅದರ ಅರಸನನ್ನು ಹಾಗು ಅದರ ಯುದ್ಧವೀರರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ.</verse>
				<verse number="3">ನಿನ್ನ ಯೋಧರೆಲ್ಲ ಆರು ದಿವಸಗಳವರೆಗೆ ದಿನಕ್ಕೆ ಒಂದು ಸಾರಿ ನಗರವನ್ನು ಸುತ್ತಲಿ.</verse>
				<verse number="4">ಏಳುಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಮಂಜೂಷದ ಮುಂದೆ ನಡೆಯಲಿ. ಏಳನೆಯ ದಿವಸ ನೀವು ಪಟ್ಟಣವನ್ನು ಏಳುಸಾರಿ ಸುತ್ತಬೇಕು. ಯಾಜಕರು ಕೊಂಬುಗಳನ್ನು ಊದಬೇಕು.</verse>
				<verse number="5">ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿ ಕೇಳುತ್ತಲೇ ನೀವೆಲ್ಲರು ಗಟ್ಟಿಯಾಗಿ ಕೇಕೆ ಹಾಕಿ ಆರ್ಭಟಿಸಿರಿ. ಆಗ ನಗರದ ಗೋಡೆ ತಾನೇ ತಾನಾಗಿ ಬಿದ್ದುಹೋಗುವುದು. ಆಗ ಪ್ರತಿಯೊಬ್ಬನು ನೆಟ್ಟಗೆ ಒಳನುಗ್ಗಬಹುದು,” ಎಂದು ಹೇಳಿದರು.</verse>
				<verse number="6">ನೂನನ ಮಗ ಯೆಹೋಶುವನು ಯಾಜಕರನ್ನು ಕರೆದು ಅವರಿಗೆ, “ನೀವು ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಹೋಗಿರಿ. ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಸರ್ವೇಶ್ವರನ ಮಂಜೂಷದ ಮುಂದೆ ನಡೆಯಲಿ,” ಎಂದು ತಿಳಿಸಿದನು.</verse>
				<verse number="7">ಅಂತೆಯೆ ಜನರಿಗೆ, “ನೀವು ಮುಂದೆ ಹೋಗಿ ನಗರವನ್ನು ಸುತ್ತುವರೆಯಿರಿ. ಯುದ್ಧಸನ್ನದ್ಧರೆಲ್ಲರೂ ಸರ್ವೇಶ್ವರನ ಮಂಜೂಷದ ಮುಂದೆ ಹೋಗಲಿ,” ಎಂದು ಹೇಳಿದನು.</verse>
				<verse number="8">ಯೆಹೋಶುವನು ಆಜ್ಞಾಪಿಸಿದಂತೆಯೇ ಏಳು ಮಂದಿ ಯಾಜಕರು ಕೊಂಬುಗಳನ್ನು ಹಿಡಿದುಕೊಂಡು ಊದುತ್ತಾ ಸರ್ವೇಶ್ವರನ ಮುಂದೆ ನಡೆದರು. ಸರ್ವೇಶ್ವರನ ಒಡಂಬಡಿಕೆಯ ಮಂಜೂಷವು ಅವರ ಹಿಂದೆ ಹೋಯಿತು.</verse>
				<verse number="9">ಯುದ್ಧಸನ್ನದ್ಧರಾದವರು ಕೊಂಬುಗಳನ್ನು ಊದುತ್ತಿದ್ದ ಯಾಜಕರ ಮುಂದೇ ಇದ್ದರು. ಹಿಂಬದಿಯ ದಂಡು ಮಂಜೂಷದ ಹಿಂದಿತ್ತು. ಕೊಂಬುಗಳು ಮೊಳಗುತ್ತಲೇ ಅವರು ಹೊರಟರು.</verse>
				<verse number="10">ಯೆಹೋಶುವನು ಜನರಿಗೆ, “ನೀವು ಈಗ ಆರ್ಭಟಿಸಬಾರದು. ನಿಮ್ಮ ಧ್ವನಿ ಕೇಳಿಸದಿರಲಿ, ನಿಮ್ಮ ಬಾಯಿಂದ ಒಂದು ಮಾತೂ ಬರಕೂಡದು. ಆರ್ಭಟಿಸಿರೆಂದು ನಾನು ಹೇಳುವಾಗ ಮಾತ್ರ ನೀವು ಆರ್ಭಟಿಸಬೇಕು,” ಎಂದು ಆಜ್ಞಾಪಿಸಿದನು.</verse>
				<verse number="11">ಸರ್ವೇಶ್ವರನ ಮಂಜೂಷವನ್ನು ಒಂದು ಸಾರಿ ನಗರ ಪ್ರದಕ್ಷಿಣೆ ಮಾಡಿಸಿದ ಮೇಲೆ, ಅವರು ಪಾಳೆಯಕ್ಕೆ ಹಿಂದಿರುಗಿ ಬಂದು ರಾತ್ರಿಯನ್ನು ಕಳೆದರು.</verse>
				<verse number="12">ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು. ಯಾಜಕರು ಮಂಜೂಷವನ್ನು ಹೊತ್ತುಕೊಂಡು ಹೊರಟರು.</verse>
				<verse number="13">ಏಳು ಮಂದಿ ಯಾಜಕರು ಕೊಂಬುಗಳನ್ನು ಊದುತ್ತಾ ಸರ್ವೇಶ್ವರನ ಮಂಜೂಷದ ಮುಂದೆ ನಡೆದರು. ಯುದ್ಧಸನ್ನದ್ಧರು ಅವರ ಮುಂದಿದ್ದರು. ಹಿಂಬದಿಯ ದಂಡು ಮಂಜೂಷದ ಹಿಂದಿತ್ತು. ಕೊಂಬುಗಳು ಮೊಳಗುತ್ತಲೇ ಅವರು ಹೊರಟರು.</verse>
				<verse number="14">ಹೀಗೆ ಎರಡನೆಯ ದಿನದಲ್ಲೂ ನಗರವನ್ನು ಸುತ್ತಿ ಪಾಳೆಯಕ್ಕೆ ಹಿಂದಿರುಗಿದರು. ಆರು ದಿನ ಹೀಗೆಯೇ ಮಾಡಿದರು.</verse>
				<verse number="15">ಏಳನೆಯ ದಿನದಲ್ಲಿ ಅವರು ಸೂರ್ಯೋದಯವಾಗುತ್ತಲೇ ಎದ್ದು ಅದೇ ಕ್ರಮದಲ್ಲಿ ನಗರವನ್ನು ಏಳುಸಾರಿ ಸುತ್ತಿದರು.</verse>
				<verse number="16">ಏಳನೆಯ ಸಾರಿ ಸುತ್ತುವಾಗ ಯಾಜಕರು ಕೊಂಬುಗಳನ್ನು ಊದಿದರು. ಯೆಹೋಶುವ ಜನರಿಗೆ, “ಆರ್ಭಟಿಸಿರಿ, ಸರ್ವೇಶ್ವರಸ್ವಾಮಿ ನಿಮಗೆ ಈ ನಗರವನ್ನು ಕೊಟ್ಟಿದ್ದಾರೆ.</verse>
				<verse number="17">ಇದೂ ಇದರಲ್ಲಿರುವುದೆಲ್ಲವೂ ಸರ್ವೇಶ್ವರನಿಗೆ ಮೀಸಲಾಗಿ ಆಹುತಿಯಾಗತಕ್ಕದೆಂದು ತಿಳಿಯಿರಿ. ವೇಶ್ಯೆಯಾದ ರಾಹಾಬಳು ಮತ್ತು ಅವಳ ಸಂಗಡ ಮನೆಯಲ್ಲಿರುವವರೆಲ್ಲರು ಉಳಿಯಲಿ. ಏಕೆಂದರೆ ನಾವು ಕಳಿಸಿದ ಗೂಢಚಾರರನ್ನು ಅವಳು ಬಚ್ಚಿಟ್ಟಿದ್ದಳು.</verse>
				<verse number="18">ನೀವಾದರೋ ಸರ್ವೇಶ್ವರನಿಗೆ ಮೀಸಲಾದ ವಸ್ತುಗಳ ವಿಷಯದಲ್ಲಿ ಜಾಗರೂಕತೆಯಿಂದಿರಬೇಕು. ನೀವು ಅವುಗಳಲ್ಲಿ ಯಾವುದನ್ನಾದರೂ ತೆಗೆದುಕೊಂಡರೆ ಇಸ್ರಯೇಲರ ಪಾಳೆಯವೇ ಶಾಪಕ್ಕೆ ಗುರಿಯಾಗಿ ನಾಶವಾದೀತು.</verse>
				<verse number="19">ಎಲ್ಲ ಬೆಳ್ಳಿ ಬಂಗಾರ ಹಾಗೂ ತಾಮ್ರ ಕಬ್ಬಿಣ ಪಾತ್ರೆಗಳು ಸರ್ವೇಶ್ವರಸ್ವಾಮಿಗೆ ಮೀಸಲಾಗಿದ್ದು ಅವರ ಭಂಡಾರಕ್ಕೆ ಸೇರತಕ್ಕವುಗಳು,” ಎಂದನು.</verse>
				<verse number="20">ಕೂಡಲೆ ಜನರು ಆರ್ಭಟಿಸಿದರು. ಕೊಂಬುಗಳು ಮೊಳಗಿದವು. ಕೊಂಬಿನ ಧ್ವನಿ ಕೇಳಿ ಜನರು ಇನ್ನೂ ಗಟ್ಟಿಯಾಗಿ ಆರ್ಭಟಿಸಿದರು. ನಗರದ ಗೋಡೆ ತಾನಾಗಿ ಬಿದ್ದುಹೋಯಿತು. ಪ್ರತಿ ಒಬ್ಬನೂ ನೆಟ್ಟಗೆ ನಗರಕ್ಕೆ ನುಗ್ಗಿದನು. ಅದು ಅವರ ಸ್ವಾಧೀನವಾಯಿತು.</verse>
				<verse number="21">ಅಲ್ಲಿದ್ದ ಗಂಡಸರು, ಹೆಂಗಸರು, ಯುವಕರು, ಮುದುಕರು, ದನ ಕುರಿ, ಕತ್ತೆ ಇವುಗಳನ್ನೆಲ್ಲಾ ನಿಶ್ಯೇಷವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು.</verse>
				<verse number="22">ಯೆಹೋಶುವನು ಆ ನಾಡಿನಲ್ಲಿ ಬೇಹುಗಾರಿಕೆ ನಡೆಸಿದ್ದ ಇಬ್ಬರು ವ್ಯಕ್ತಿಗಳನ್ನು ಕರೆದು, “ನೀವು ಆ ವೇಶ್ಯೆಯ ಮನೆಗೆ ಹೋಗಿ, ಅವಳಿಗೆ ಪ್ರಮಾಣ ಮಾಡಿದಂತೆ ಅವಳನ್ನೂ ಅವಳಿಗಿರುವುದೆಲ್ಲವನ್ನು ಹೊರಗೆ ತೆಗೆದುಕೊಂಡು ಬನ್ನಿ,” ಎಂದು ಹೇಳಿದನು.</verse>
				<verse number="23">ಅಂತೆಯೇ ಅವರು ಹೋಗಿ ರಾಹಾಬಳನ್ನೂ ಅವಳ ತಂದೆತಾಯಿಗಳನ್ನೂ ಸಹೋದರರನ್ನೂ ಅವಳಿಗಿದ್ದುದೆಲ್ಲವನ್ನೂ ಅವಳ ಎಲ್ಲಾ ಸಂಬಂಧಿಕರನ್ನೂ ಇಸ್ರಯೇಲರ ಪಾಳೆಯದ ಹೊರಗಡೆ ಸುಭದ್ರವಾಗಿರಿಸಿದರು.</verse>
				<verse number="24">ಬಳಿಕ ನಗರವನ್ನೂ - ಅದರಲ್ಲಿದ್ದುದೆಲ್ಲವನ್ನೂ ಬೆಂಕಿಯಿಂದ ಸುಟ್ಟುಹಾಕಿದರು. ಆದರೆ ಬೆಳ್ಳಿ ಬಂಗಾರವನ್ನು, ಕಂಚುಕಬ್ಬಿಣಗಳ ಪಾತ್ರೆ ಸರ್ವೇಶ್ವರನ ಆಲಯದ ಭಂಡಾರಕ್ಕೆ ಒಪ್ಪಿಸಿದರು.</verse>
				<verse number="25">ವೇಶ್ಯೆಯಾದ ರಾಹಾಬಳು, ಜೆರಿಕೋ ನಗರದಲ್ಲಿ ಸಂಚರಿಸಿ ನೋಡಲು ಬಂದಿದ್ದ ಯೆಹೋಶುವನ ಗೂಢಚಾರರನ್ನು ಬಚ್ಚಿಟ್ಟಿದ್ದರಿಂದ ಅವಳನ್ನೂ ಅವಳ ತಂದೆಯ ಮನೆಯವರನ್ನೂ ಅವಳಿಗಿದ್ದುದೆಲ್ಲವನ್ನೂ ಉಳಿಸಿದರು. ಅವಳು ಇಂದಿನವರೆಗೂ ಇಸ್ರಯೇಲರಲ್ಲೇ ವಾಸವಾಗಿದ್ದಾಳೆ.</verse>
				<verse number="26">ಅದೇ ಸಮಯಕ್ಕೆ ಯೆಹೋಶುವನು ಇಸ್ರಯೇಲರಿಂದ ಪ್ರಮಾಣ ಮಾಡಿಸಿ ಅವರಿಗೆ, “ಜೆರಿಕೋ ಎಂಬ ಈ ನಗರವನ್ನು ಕಟ್ಟುವುದಕ್ಕೆ ಕೈಹಾಕುವವನು ಸರ್ವೇಶ್ವರನ ದೃಷ್ಟಿಯಲ್ಲಿ ಶಾಪಗ್ರಸ್ತನಾಗಿರಲಿ! ಅಂಥವನು ಅದಕ್ಕೆ ಅಸ್ತಿವಾರ ಹಾಕುವಾಗ ಹಿರಿಯ ಮಗನನ್ನೂ ಬಾಗಿಲುಗಳನ್ನಿಡುವಾಗ ಕಿರಿಯ ಮಗನನ್ನೂ ಕಳೆದುಕೊಳ್ಳಲಿ,” ಎಂದು ಹೇಳಿದನು.</verse>
				<verse number="27">ಸರ್ವೇಶ್ವರಸ್ವಾಮಿ ಯೆಹೋಶುವನ ಸಂಗಡ ಇದ್ದುದರಿಂದ ಅವನ ಕೀರ್ತಿ ನಾಡಿನಲ್ಲೆಲ್ಲಾ ಹರಡಿತು.</verse>
			</chapter>
			<chapter number="7">
				<verse number="1">ಆಕಾನನು ಯೆಹೂದ್ಯ ಕುಲದವನು, ಜೆರಹನ ಗೋತ್ರದವನು, ಕರ್ಮೀಯ ಮಗನೂ ಜಬ್ದೀಯ ಕುಟುಂಬದವನೂ ಆಗಿದ್ದನು. ಸರ್ವೇಶ್ವರಸ್ವಾಮಿಗೆ ಮೀಸಲಾಗಿಟ್ಟ ವಸ್ತುಗಳಲ್ಲಿ ಈತ ಕೆಲವನ್ನು ಕದ್ದುಕೊಂಡನು. ಈ ಕಾರಣ ಇಸ್ರಯೇಲರೆಲ್ಲರು ದ್ರೋಹಿಗಳಾದರು. ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು.</verse>
				<verse number="2">ಯೆಹೋಶುವನು ಕೆಲವು ಜನರನ್ನು ಕರೆದು, “ನೀವು ಬೇತೇಲಿನ ಪೂರ್ವಕ್ಕೂ ಬೇತಾವೆನಿನ ಸಮೀಪದಲ್ಲೂ ಇರುವ ‘ಆಯಿ’ ಎಂಬ ಪ್ರಾಂತ್ಯಕ್ಕೆ ಹೋಗಿ ಬೇಹುನೋಡಿ ಬನ್ನಿ,” ಎಂದು ಹೇಳಿ ಅವರನ್ನು ಜೆರಿಕೋವಿನಿಂದ ಕಳಿಸಿದನು. ಅವರು ಹೋಗಿ ಆಯಿ ಎಂಬ ಊರನ್ನು ಸಂಚರಿಸಿ ಬೇಹು ನೋಡಿ ಹಿಂದಿರುಗಿ ಬಂದರು.</verse>
				<verse number="3">ಬಂದ ಬಳಿಕ ಯೆಹೋಶುವನಿಗೆ, “ಎಲ್ಲಾ ಜನರು ಹೋಗುವುದು ಅವಶ್ಯವಿಲ್ಲ, ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರೇ ಆ ನಗರವನ್ನು ಜಯಿಸಬಹುದು. ಎಲ್ಲರನ್ನು ಕಳುಹಿಸಿ ಸುಮ್ಮನೆ ದಣಿಸುವುದೇಕೆ? ಅಲ್ಲಿ ಸ್ವಲ್ಪಮಂದಿ ಮಾತ್ರ ಇದ್ದಾರೆ,” ಎಂದು ವರದಿ ಮಾಡಿದರು.</verse>
				<verse number="4">ಅದರಂತೆಯೇ ಸುಮಾರು ಮೂರುಸಾವಿರ ಮಂದಿ ಹೋದರು. ಆದರೆ ಅವರು ಆಯಿ ಎಂಬ ಊರಿನವರನ್ನು ಎದುರಿಸಲಾಗದೆ ಓಡಿಬರಬೇಕಾಯಿತು.</verse>
				<verse number="5">ಆಯಿ ಊರಿನವರು ಅವರನ್ನು ಊರ ಬಾಗಿಲಿನಿಂದ ಕಲ್ಲುಗಣಿಯವರೆಗೂ ಹಿಂದಟ್ಟಿ ಇಳಿನೆಲದಲ್ಲಿ ಅವರನ್ನು ಸೋಲಿಸಿ ಸುಮಾರು ಮೂವತ್ತಾರು ಮಂದಿಯನ್ನು ಕೊಂದುಹಾಕಿದರು. ಇದರಿಂದ ಇಸ್ರಯೇಲರ ಧೈರ್ಯ ಕರಗಿ ನೀರಾಯಿತು.</verse>
				<verse number="6">ಆಗ ಯೆಹೋಶುವನು ಮತ್ತು ಇಸ್ರಯೇಲರ ಹಿರಿಯರು ದುಃಖ ತಾಳಲಾರದೆ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡು ಸಾಯಂಕಾಲದವರೆಗೆ ಸರ್ವೇಶ್ವರನ ಮಂಜೂಷದ ಮುಂದೆ ಅಧೋಮುಖರಾಗಿ ಬಿದ್ದಿದ್ದರು.</verse>
				<verse number="7">ಯೆಹೋಶುವನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನೀವು ಈ ಜನರನ್ನು ಜೋರ್ಡನ್ ನದಿ ದಾಟಿಸಿದ್ದೇಕೆ? ನಮ್ಮನ್ನು ಅಮೋರಿಯರ ಕೈಗೊಪ್ಪಿಸಿ ನಾಶಮಾಡಬೇಕೆಂದಿರುವಿರಾ? ನಾವು ಇಷ್ಟೇ ಸಾಕೆಂದು ಜೋರ್ಡನ್ ನದಿಯ ಆಚೆ ಕಡೆಯಲ್ಲೇ ಇದ್ದಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.</verse>
				<verse number="8">ಸರ್ವೇಶ್ವರಾ, ಇಸ್ರಯೇಲರು ಶತ್ರುಗಳಿಗೆ ಬೆನ್ನು ತೋರಿಸಿದ್ದಾರಲ್ಲಾ! ನಾನು ಏನು ತಾನೇ ಹೇಳಲಿ!</verse>
				<verse number="9">ಕಾನಾನ್ಯರು ಮತ್ತು ನಾಡಿನ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರೇ ಉಳಿಯದಂತೆ ಮಾಡುವರು. ಆಗ ನಿಮ್ಮ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿರಿ?” ಎಂದನು.</verse>
				<verse number="10">ಸರ್ವೇಶ್ವರ ಯೆಹೋಶುವನಿಗೆ ಹೀಗೆ ಎಂದರು: “ನೀನು ಅಧೋಮುಖವಾಗಿ ಬಿದ್ದು ಇರುವುದೇಕೆ, ಏಳು.</verse>
				<verse number="11">ಇಸ್ರಯೇಲರು ನನ್ನ ಕಟ್ಟಳೆಯನ್ನು ಮೀರಿ ಪಾಪಿಷ್ಠರಾಗಿದ್ದಾರೆ. ಮೀಸಲಾದ ವಸ್ತುಗಳನ್ನು ತೆಗೆದುಕೊಂಡು ಕಳ್ಳರಾಗಿದ್ದಾರೆ. ಅವುಗಳನ್ನು ತಮ್ಮ ಸಲಕರಣೆಗಳಲ್ಲಿ ಬಚ್ಚಿಟ್ಟುಕೊಂಡು ವಂಚಕರಾಗಿದ್ದಾರೆ.</verse>
				<verse number="12">ಆದುದರಿಂದಲೇ ಇಸ್ರಯೇಲರು ಶತ್ರುಗಳ ಮುಂದೆ ನಿಲ್ಲಲಾರದೆ ಬೆನ್ನು ತೋರಿಸಿದ್ದಾರೆ. ಅವರು ಶಾಪಗ್ರಸ್ತರೇ ಸರಿ. ಶಾಪಕ್ಕೆ ಕಾರಣವಾದುದನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕುವ ತನಕ ನಾನು ನಿಮ್ಮ ಸಂಗಡ ಬರುವುದಿಲ್ಲ.</verse>
				<verse number="13">ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ, ‘ಇಸ್ರಯೇಲರೇ, ನಾಳೆ ನಿಮ್ಮನ್ನೇ ಶುದ್ಧೀಕರಿಸಿಕೊಳ್ಳಿ. ನಿಮ್ಮ ಮಧ್ಯೆ ಶಾಪಕ್ಕೆ ಕಾರಣವಾದದ್ದು ಉಂಟು. ಅದನ್ನು ನೀವು ತೆಗೆದು ಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ ಹೇಳಿದ್ದಾರೆ.</verse>
				<verse number="14">ನಾಳೆ ಬೆಳಿಗ್ಗೆ ನೀವು ಕುಲ ಕುಲವಾಗಿ ನನ್ನ ಬಳಿಗೆ ಬನ್ನಿ. ಸರ್ವೇಶ್ವರ ಯಾವ ಕುಲವನ್ನು ಸೂಚಿಸುತ್ತಾರೋ ಆ ಕುಲವು ಗೋತ್ರ ಗೋತ್ರವಾಗಿ, ಯಾವ ಗೋತ್ರವನ್ನು ಸೂಚಿಸುತ್ತಾರೋ ಆ ಗೋತ್ರವು ಕುಟುಂಬ ಕುಟುಂಬವಾಗಿ, ಯಾವ ಕುಟುಂಬವನ್ನು ಸೂಚಿಸುತ್ತಾರೋ ಆ ಕುಟುಂಬದವರು ಒಬ್ಬೊಬ್ಬರಾಗಿ ಬರಬೇಕು.</verse>
				<verse number="15">ಯಾವನು ಮೀಸಲಾದ ವಸ್ತುವನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುತ್ತಾನೋ ಅವನು ತನ್ನ ಆಸ್ತಿಪಾಸ್ತಿ ಸಹಿತವಾಗಿ ಸುಡಲ್ಪಡಬೇಕು. ಏಕೆಂದರೆ ಅವನು ಸರ್ವೇಶ್ವರನ ಕಟ್ಟಳೆಯನ್ನು ಮೀರಿ ಇಸ್ರಯೇಲರಲ್ಲಿ ಭ್ರಷ್ಟಾಚಾರವನ್ನು ನಡೆಸಿದ್ದಾನೆ,’ ಎಂದು ಹೇಳು.”</verse>
				<verse number="16">ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಯೇಲ್ ಕುಲಗಳನ್ನು ಒಂದೊಂದಾಗಿ ಬರಮಾಡಿದನು. ಯೆಹೂದಕುಲ ಸಿಕ್ಕಿಕೊಂಡಿತು.</verse>
				<verse number="17">ಅದರ ಗೋತ್ರಗಳನ್ನು ಕರೆದಾಗ ಜೆರಹನ ಗೋತ್ರ ಸಿಕ್ಕಿಕೊಂಡಿತು. ಆ ಗೋತ್ರದ ಕುಟುಂಬಗಳನ್ನು ಕರೆದಾಗ ಜಬ್ದೀಯ ಕುಟುಂಬ ಸಿಕ್ಕಿಕೊಂಡಿತು.</verse>
				<verse number="18">ಆ ಕುಟುಂಬದವರಲ್ಲಿ ಒಬ್ಬನಾದ ಮೇಲೆ ಒಬ್ಬನನ್ನು ಕರೆದಾಗ ಆಕಾನನು ಸಿಕ್ಕಿಕೊಂಡನು. ಯೆಹೂದ ಕುಲದವನೂ ಜೆರಹನ ಗೋತ್ರದವನೂ ಜಬ್ದೀಯ ಕುಟುಂಬದವನೂ ಹಾಗೂ ಕರ್ಮೀಯ ಮಗನೂ ಇವನೇ.</verse>
				<verse number="19">ಆಕಾನನಿಗೆ ಯೆಹೋಶುವನು, “ಮಗನೇ, ನೀನು ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಸ್ತುತಿಸಿ ಸ್ತೋತ್ರ ಸಲ್ಲಿಸು. ನೀನು ಮಾಡಿದ್ದನ್ನು ಮುಚ್ಚುಮರೆಯಿಲ್ಲದೆ ನನಗೆ ತಿಳಿಸು, ಎಂದನು</verse>
				<verse number="20">ಅವನಿಗೆ ಆಕಾನನು, “ನಾನು ಇಂಥ ಕಾರ್ಯವನ್ನು ಮಾಡಿ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದು ನಿಜ,</verse>
				<verse number="21">ನಾನು ಕೊಳ್ಳೆಯಲ್ಲಿ ಶಿನಾರ್ ನಾಡಿನ ಒಂದು ಉತ್ತಮವಾದ ನಿಲುವಂಗಿಯನ್ನೂ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಅರ್ಧ ಕಿಲೋಗ್ರಾಂ ತೂಕದ ಗಟ್ಟಿಯನ್ನೂ ಕಂಡು ಆಶೆಯಿಂದ ಅವನ್ನು ತೆಗೆದುಕೊಂಡೆ. ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ಹೂತಿಟ್ಟಿದ್ದೇನೆ; ಬೆಳ್ಳಿಯು ಅಂಗಿಯ ಕೆಳಗಿದೆ,” ಎಂದು ಉತ್ತರಕೊಟ್ಟನು.</verse>
				<verse number="22">ಆಗ ಯೆಹೋಶುವನು ಆಳುಗಳನ್ನು ಕಳುಹಿಸಲು ಅವರು ಓಡಿಹೋಗಿ ಹುಡುಕಿದರು. ಆ ನಿಲುವಂಗಿಯನ್ನು ಗುಡಾರದಲ್ಲಿ ಹೂತಿಡಲಾಗಿತ್ತು. ಅದರ ಕೆಳಗೆ ಬೆಳ್ಳಿ ಇತ್ತು.</verse>
				<verse number="23">ಆಳುಗಳು ಅವುಗಳನ್ನು ಗುಡಾರದಿಂದ ತೆಗೆದುಕೊಂಡು ಯೆಹೋಶುವನೂ ಇಸ್ರಯೇಲರೂ ಇದ್ದಲ್ಲಿಗೆ ಬಂದು ಸರ್ವೇಶ್ವರಸ್ವಾಮಿಯ ಮುಂದಿಟ್ಟರು.</verse>
				<verse number="24">ಜೆರಹನ ಮಗನಾದ ಆಕಾನನನ್ನು ಹಿಡಿದು ಬೆಳ್ಳಿ, ನಿಲುವಂಗಿ, ಬಂಗಾರದ ಗಟ್ಟಿಯನ್ನು, ಅವನ ಗಂಡುಹೆಣ್ಣು ಮಕ್ಕಳನ್ನು, ದನ, ಕರು, ಕತ್ತೆ, ಆಡುಕುರಿಗಳನ್ನು ಮತ್ತು ಗುಡಾರವನ್ನು ಆಕೋರ್ ಎಂಬ ಕಣಿವೆಗೆ ಒಯ್ಯಲಾಯಿತು. ಯೆಹೋಶುವನೂ ಇಸ್ರಯೇಲರೆಲ್ಲರೂ ಅಲ್ಲಿಗೆ ಬಂದರು.</verse>
				<verse number="25">ಯೆಹೋಶುವನು ಆಕಾನನಿಗೆ, “ನೀನು ನಮ್ಮನ್ನು ಆಪತ್ತಿಗೆ ಗುರಿಮಾಡಿದ್ದೇಕೆ? ಈ ದಿನ ಸರ್ವೇಶ್ವರ ನಿನ್ನ ಮೇಲೆ ಆಪತ್ತು ಬರಮಾಡುವರು,” ಎಂದ ಕೂಡಲೆ ಇಸ್ರಯೇಲರೆಲ್ಲರೂ ಅವನನ್ನು ಕಲ್ಲೆಸೆದು ಕೊಂದರು. ಕಲ್ಲೆಸೆದದ್ದು ಮಾತ್ರವಲ್ಲ, ಅವನಿಗೆ ಇದ್ದುದೆಲ್ಲವನ್ನೂ ಬೆಂಕಿಯಿಂದ ಸುಟ್ಟರು.</verse>
				<verse number="26">ಅವನ ಮೇಲೆ ಕಲ್ಲುಗಳ ಒಂದು ದೊಡ್ಡ ಗುಡ್ಡೆಯನ್ನು ಹಾಕಿದರು. ಅದು ಇಂದಿನವರೆಗೂ ಇದೆ. ಬಳಿಕ ಸರ್ವೇಶ್ವರನ ಕೋಪಾಗ್ನಿ ತಣ್ಣಗಾಯಿತು. ಈ ಘಟನೆಯಿಂದಾಗಿ ಆ ಸ್ಥಳಕ್ಕೆ ‘ಆಕೋರಿನ ಕಣಿವೆ’ ಎಂಬ ಹೆಸರು ಬಂದಿತು.</verse>
			</chapter>
			<chapter number="8">
				<verse number="1">ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ಅಂಜಬೇಡ, ಕಳವಳಗೊಳ್ಳಬೇಡ; ಯೋಧರೆಲ್ಲರನ್ನು ನಿನ್ನೊಡನೆ ಕರೆದುಕೊಂಡು ಆಯಿಗೆ ಹೋಗು. ಆಯಿ ಎಂಬ ಊರಿನ ರಾಜ, ಪ್ರಜೆ, ನಗರ, ನಾಡು ಇವೆಲ್ಲವನ್ನು ನಿನಗೆ ಕೊಟ್ಟಿದ್ದೇನೆ, ಹೋಗು.</verse>
				<verse number="2">ಜೆರಿಕೋವಿಗೂ ಅದರ ಅರಸನಿಗೂ ಮಾಡಿದಂತೆಯೇ ಆಯಿಗೂ ಅದರ ಅರಸನಿಗೂ ಮಾಡು. ಆದರೆ ಕೊಳ್ಳೆಯನ್ನೂ ಪಶುಪ್ರಾಣಿಗಳನ್ನೂ ಈ ಸಾರಿ ನೀವೇ ಇಟ್ಟುಕೊಳ್ಳಬಹುದು. ನಿಮ್ಮಲ್ಲಿ ಕೆಲವರು ಆ ಊರಿನ ಹಿಂಬದಿಯಲ್ಲಿ ಹೊಂಚುಹಾಕಿಕೊಂಡಿರಲಿ,” ಎಂದು ಆಜ್ಞಾಪಿಸಿದರು.</verse>
				<verse number="3">ಅಂತೆಯೇ ಯೆಹೋಶುವನು ಯೋಧರೆಲ್ಲರ ಸಹಿತವಾಗಿ ಆಯಿಗೆ ಹೊರಡಲು ಸಿದ್ಧನಾದನು. ಮೂವತ್ತು ಸಾವಿರ ಯುದ್ಧವೀರರನ್ನು ಆರಿಸಿಕೊಂಡನು.</verse>
				<verse number="4">ಅವರಿಗೆ, “ನೀವು ನಗರದ ಹಿಂಭಾಗದಲ್ಲಿ ಹೊಂಚುಹಾಕಿ ಕುಳಿತಿರಬೇಕು. ನಗರದಿಂದ ಬಹುದೂರವಾಗಿರಬೇಡಿ. ಎಲ್ಲರೂ ಸಿದ್ಧವಾಗಿರಿ.</verse>
				<verse number="5">ನಾನು ಮತ್ತು ನನ್ನ ಸಂಗಡದವರೆಲ್ಲರು ನಗರದ ಸಮೀಪಕ್ಕೆ ಹೋಗುತ್ತೇವೆ. ಆಯಿಯ ಜನರು ಮುಂಚಿನಂತೆ ನಮ್ಮೊಡನ ಯುದ್ಧಕ್ಕೆ ಬರುವರು. ಕೂಡಲೆ ನಾವು ಅಲ್ಲಿಂದ ಓಡಿಹೋಗುತ್ತೇವೆ.</verse>
				<verse number="6">‘ಇವರು ಮುಂಚಿನಂತೆ ನಮಗೆ ಹೆದರಿ ಓಡಿಹೋಗುತ್ತಿದ್ದಾರೆ’ ಎಂದು ಭಾವಿಸಿ, ಅವರು ನಮ್ಮನ್ನು ಹಿಂದಟ್ಟುವರು. ನಾವು ಓಡುತ್ತಲೇ ಇರುತ್ತೇವೆ.</verse>
				<verse number="7">ನಾವು ಮತ್ತು ಅವರು ನಗರಕ್ಕೆ ದೂರವಾದ ಮೇಲೆ ನೀವು ಹೊಂಚಿ ನೋಡುವ ಸ್ಥಳದಿಂದ ಎದ್ದು ನಗರದೊಳಗೆ, ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರ ಅದನ್ನು ನಿಮ್ಮ ಕೈಗೆ ಒಪ್ಪಿಸುವರು.</verse>
				<verse number="8">ನೀವು ನಗರವನ್ನು ಹಿಡಿದ ಕೂಡಲೇ ಅದಕ್ಕೆ ಬೆಂಕಿ ಹೊತ್ತಿಸಿರಿ. ಸರ್ವೇಶ್ವರನ ಮಾತಿನಂತೆ ನಡೆಯಿರಿ. ಇದೇ ನಾನು ನಿಮಗೆ ಕೊಡುವ ಆಜ್ಞೆ,” ಎಂದು ಹೇಳಿ ಅವರನ್ನು ರಾತ್ರಿಯಲ್ಲೇ ಕಳಿಸಿದನು.</verse>
				<verse number="9">ಅವರು ಹೊಂಚುಹಾಕುವ ಸಲುವಾಗಿ ಬೇತೇಲಿಗೂ ಆಯಿಗೂ ನಡುವೆ ಆಯಿಯ ಪಶ್ಚಿಮಕ್ಕೆ ಹೋಗಿ ಅಡಗಿಕೊಂಡರು. ಯೆಹೋಶುವನು ಆ ರಾತ್ರಿಯಲ್ಲಿ ಜನರ ಮಧ್ಯೆ ಕಳೆದನು.</verse>
				<verse number="10">ಬೆಳಿಗ್ಗೆ ಅವನೆದ್ದು ಇಸ್ರಯೇಲರ ಹಿರಿಯರ ಸಂಗಡ ಸೈನ್ಯವನ್ನು ಕೂಡಿಸಿ ಅವರ ಮುಂದೆ ಆಯಿಗೆ ಹೊರಟನು.</verse>
				<verse number="11">ಅವನೊಂದಿಗಿದ್ದ ಯೋಧರೆಲ್ಲರು ನಗರದ ಸಮೀಪಕ್ಕೆ ಏರಿಬಂದು ಅದರ ಉತ್ತರ ದಿಕ್ಕಿನಲ್ಲಿ ಇಳಿದುಕೊಂಡರು. ಅವರಿಗೂ ಆಯಿಗೂ ನಡುವೆ ಒಂದು ಕಣಿವೆ ಇತ್ತು.</verse>
				<verse number="12">ಯೆಹೋಶುವ ಸುಮಾರು ಐದು ಸಾವಿರ ಜನರನ್ನು ಆರಿಸಿಕೊಂಡು ಬೇತೇಲಿಗೂ ಆಯಿಗೂ ನಡುವೆ ನಗರದ ಪಶ್ಚಿಮದಲ್ಲಿ ಹೊಂಚಿನೋಡುವುದಕ್ಕಾಗಿ ಇರಿಸಿದನು.</verse>
				<verse number="13">ನಗರದ ಉತ್ತರದಲ್ಲಿದ್ದ ಸಮಸ್ತ ಸೈನ್ಯವನ್ನು, ನಗರದ ಪಶ್ಚಿಮದಲ್ಲಿ ಹೊಂಚಿನೋಡುತ್ತಿದ್ದ ಸೈನ್ಯವನ್ನು ಕ್ರಮಪಡಿಸಿದ ನಂತರ ಅವನು ಆ ರಾತ್ರಿಯನ್ನು ಕಣಿವೆಯಲ್ಲಿ ಕಳೆದನು.</verse>
				<verse number="14">ಬೆಳಿಗ್ಗೆ ಆಯಿ ಊರಿನರಸನು ಈ ಸಮಾಚಾರವನ್ನು ತಿಳಿದು ತ್ವರೆಯಾಗಿ ಜನರೆಲ್ಲರ ಸಹಿತ ಇಸ್ರಯೇಲರ ಸಂಗಡ ಯುದ್ಧಮಾಡಲು ಹೊರಟನು. ಅವನೂ ಅವನ ಜನರೂ ಅರಾಬಾ ಎಂಬ ಸ್ಥಳಕ್ಕೆ ಎದುರಾಗಿದ್ದ ಆ ಕಣಿವೆಗೆ ಬಂದರು. ನಗರದ ಹಿಂಭಾಗದಲ್ಲಿ ಹೊಂಚಿ ನೋಡುತ್ತಿರುವವರ ವಿಷಯ ಅವನಿಗೆ ಗೊತ್ತಿರಲಿಲ್ಲ.</verse>
				<verse number="15">ಯೆಹೋಶುವನೂ ಅವನ ಸಂಗಡ ಇದ್ದ ಇಸ್ರಯೇಲರೆಲ್ಲರೂ ತಾವು ಸೋತವರೋ ಎಂಬಂತೆ ಅರಣ್ಯಮಾರ್ಗವಾಗಿ ಓಡತೊಡಗಿದರು.</verse>
				<verse number="16">ಆಯಿ ನಗರದವರು ಊರಿನಲ್ಲಿದ್ದ ತಮ್ಮ ಎಲ್ಲ ಜನರನ್ನು ಕರೆದುಕೊಂಡು ಯೆಹೋಶುವನನ್ನು ಹಿಂದಟ್ಟುತ್ತಾ ನಗರದಿಂದ ದೂರದೂರ ಆದರು.</verse>
				<verse number="17">ಇತ್ತ ಆಯಿಯಲ್ಲಿ ಹಾಗೂ ಬೇತೇಲಿನಲ್ಲಿ ಗಂಡಸರು ಇರಲಿಲ್ಲ. ಊರಬಾಗಿಲುಗಳನ್ನು ತೆರೆದಿಟ್ಟು ಎಲ್ಲರೂ ಇಸ್ರಯೇಲರನ್ನು ಹಿಂದಟ್ಟಿ ಹೋಗಿದ್ದರು.</verse>
				<verse number="18">ಆಗ ಸರ್ವೇಶ್ವರ ಯೆಹೋಶುವನಿಗೆ, “ನಿನ್ನ ಕೈಯಲ್ಲಿರುವ ಈಟಿಯನ್ನು ಆಯಿಕಡೆಗೆ ಚಾಚು. ಆ ನಗರವನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ,” ಎಂದರು. ಅವನು ಅಂತೆಯೇ ಚಾಚಿದನು.</verse>
				<verse number="19">ಚಾಚಿದ ಕೂಡಲೆ ಹೊಂಚುಗಾರರು ತಾವಿದ್ದ ಸ್ಥಳದಿಂದ ಎದ್ದು ಓಡಿಬಂದು ನಗರದೊಳಕ್ಕೆ ನುಗ್ಗಿ ಒಡನೆ ಬೆಂಕಿ ಹೊತ್ತಿಸಿದರು.</verse>
				<verse number="20">ಆಯಿಯ ಜನರು ಹಿಂದಿರುಗಿ ನೋಡಿದಾಗ ನಗರದ ಹೊಗೆ ಆಕಾಶಕ್ಕೆ ಏರುತ್ತಿತ್ತು. ಯಾವ ಮಾರ್ಗದಿಂದಲೂ ಅವರಿಗೆ ತಪ್ಪಿಸಿಕೊಳ್ಳಲು ಆಗಲಿಲ್ಲ. ಏಕೆಂದರೆ ಅರಣ್ಯದ ಕಡೆಗೆ ಓಡಿಹೋಗುತ್ತಿದ್ದ ಇಸ್ರಯೇಲರು ಹಿಂದಟ್ಟಿ ಬರುವವರ ಕಡೆಗೆ ತಿರುಗಿದ್ದರು.</verse>
				<verse number="21">ನಗರವು ಹೊಂಚುಗಾರರಿಗೆ ಸ್ವಾಧೀನವಾದುದನ್ನೂ ಹೊಗೆ ಆಕಾಶಕ್ಕೆ ಏರುತ್ತಿದ್ದುದನ್ನೂ ನೋಡಿದ ಯೆಹೋಶುವ ಹಾಗೂ ಇಸ್ರಯೇಲರು ಹಿಂದಿರುಗಿ ಆಯಿ ಜನರ ಮೇಲೆ ಬಿದ್ದರು.</verse>
				<verse number="22">ನಗರಕ್ಕೆ ನುಗ್ಗಿದವರೂ ಹೊರಗೆ ಬಂದು ಆ ಜನರ ಮೇಲೆ ಎರಗಿದರು. ಹೀಗೆ ಆ ಕಡೆಯಿಂದಲೂ ಈ ಕಡೆಯಿಂದಲೂ ಇಸ್ರಯೇಲರ ಕೈಗೆ ಸಿಕ್ಕಿಬಿದ್ದರು. ಎಲ್ಲರನ್ನು ಸದೆಬಡಿಯಲಾಯಿತು. ಒಬ್ಬನಾದರೂ ಉಳಿಯಲಿಲ್ಲ. ಯಾವನೂ ತಪ್ಪಿಸಿಕೊಳ್ಳಲಿಲ್ಲ.</verse>
				<verse number="23">ಆಯಿಯ ಅರಸನನ್ನು ಮಾತ್ರ ಜೀವಸಹಿತ ಹಿಡಿದು ಯೆಹೋಶುವನ ಬಳಿಗೆ ಕರೆದುಕೊಂಡು ಬಂದರು.</verse>
				<verse number="24">ಇಸ್ರಯೇಲರು ತಮ್ಮನ್ನು ಅರಣ್ಯದವರೆಗೂ ಬೆನ್ನಟ್ಟಿ ಬಂದ ಆಯಿ ಜನರನ್ನು ಅಲ್ಲೇ ಕತ್ತಿಯಿಂದ ಸಂಹರಿಸಿದ ನಂತರ ಅವರೆಲ್ಲರು ನಗರಕ್ಕೆ ಹೋಗಿ ಅಲ್ಲಿದ್ದವರನ್ನೂ ಕೊಂದರು.</verse>
				<verse number="25">ಆ ದಿನ ಆಯಿ ಜನರಲ್ಲಿ ಸತ್ತ ಗಂಡಸರ ಮತ್ತು ಹೆಂಗಸರ ಸಂಖ್ಯೆ ಹನ್ನೆರಡು ಸಾವಿರ.</verse>
				<verse number="26">ಆ ನಗರದವರೆಲ್ಲರು ಹತರಾಗುವವರೆಗೆ ಯೆಹೋಶುವ ಈಟಿ ಹಿಡಿದು ಚಾಚಿದ ಕೈಯನ್ನು ಹಿಂದೆಗೆಯಲಿಲ್ಲ.</verse>
				<verse number="27">ಸರ್ವೇಶ್ವರ ಯೆಹೋಶುವನಿಗೆ ಆಜ್ಞಾಪಿಸಿದಂತೆಇಸ್ರಯೇಲರು ಆ ನಗರದಿಂದ ಪಶುಪ್ರಾಣಿ ಮೊದಲಾದವುಗಳನ್ನು ಮಾತ್ರ ಕೊಳ್ಳೆಯಾಗಿ ತೆಗೆದುಕೊಂಡರು.</verse>
				<verse number="28">ಯೆಹೋಶುವನು ಆಯಿ ನಗರವನ್ನು ಸುಟ್ಟು ಅದು ಎಂದಿಗೂ ಮರಳಿ ಕಟ್ಟಲಾಗದಂತೆ ಹಾಳುದಿಬ್ಬವಾಗಿಸಿಬಿಟ್ಟನು. ಅದು ಇಂದಿನವರೆಗೂ ಹಾಗೆಯೆ ಉಳಿದಿದೆ.</verse>
				<verse number="29">ಆಯಿಯ ಅರಸನನ್ನು ಸಂಜೆಯವರೆಗೂ ಮರಕ್ಕೆ ನೇತುಹಾಕಿಸಿದನು. ಸೂರ್ಯನು ಅಸ್ತಮಿಸುತ್ತಲೆ ಅವನ ಶವವನ್ನು ಕೆಳಗಿಳಿಸಿ ಅದನ್ನು ಊರಬಾಗಿಲಿನಲ್ಲಿ ಹಾಕಿಸಿ ಅದರ ಮೇಲೆ ಕಲ್ಲಿನ ದೊಡ್ಡ ರಾಶಿಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.</verse>
				<verse number="30">ಸರ್ವೇಶ್ವರನ ದಾಸ ಮೋಶೆ ಇಸ್ರಯೇಲರಿಗೆ ಆಜ್ಞಾಪಿಸಿದ್ದಂತೆ ಹಾಗೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಯೆಹೋಶುವನು ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಏಬಾಲ್ ಬೆಟ್ಟದಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು. ಯಾವ ಕಬ್ಬಿಣವೂ ಮುಟ್ಟದ ಹುಟ್ಟುಕಲ್ಲುಗಳಿಂದಲೇ ಅದನ್ನು ಕಟ್ಟಿಸಿದನು.</verse>
				<verse number="31">ಜನರು ಅದರ ಮೇಲೆ ಸರ್ವೇಶ್ವರನಿಗೆ ದಹನ ಹೋಮಬಲಿಗಳನ್ನೂ ಸಮಾಧಾನಬಲಿಗಳನ್ನೂ ಸಮರ್ಪಿಸಿದರು.</verse>
				<verse number="32">ಯೆಹೋಶುವನು ಅಲ್ಲಿದ್ದ ಕಲ್ಲುಗಳ ಮೇಲೆ ಜನರೆಲ್ಲರ ಸಮಕ್ಷಮದಲ್ಲಿ ಮೋಶೆಯ ಧರ್ಮಶಾಸ್ತ್ರದ ಒಂದು ಪ್ರತಿಯನ್ನು ಬರೆದನು.</verse>
				<verse number="33">ಎಲ್ಲ ಇಸ್ರಯೇಲರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಅನ್ಯದೇಶೀಯರು ಹಾಗೂ ಸ್ವದೇಶೀಯರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ನಿಂತರು. ಆ ಮಂಜೂಷವನ್ನು ಹೊತ್ತ ಲೇವಿಯರಾದ ಯಾಜಕರಿಗೆ ಅಭಿಮುಖರಾಗಿ ನಿಂತರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನ, ಏಬಾಲ್ ಬೆಟ್ಟದ ಕಡೆ ಅರ್ಧಜನ, ಹೀಗೆ ಸರ್ವೇಶ್ವರನ ದಾಸ ಮೋಶೆ ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ಪಡೆಯುವುದಕ್ಕೋಸ್ಕರ ನಿಂತರು.</verse>
				<verse number="34">ಅನಂತರ ಯೆಹೋಶುವನು ಧರ್ಮಶಾಸ್ತ್ರದ ಎಲ್ಲಾ ಆಶೀರ್ವಾದ ಹಾಗು ಶಾಪವಾಕ್ಯಗಳನ್ನು ಆ ಗ್ರಂಥದಲ್ಲಿ ಇದ್ದ ಹಾಗೆಯೇ ಓದಿದನು.</verse>
				<verse number="35">ಮೋಶೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಮಹಿಳೆಯರಿಗೂ ಮಕ್ಕಳಿಗೂ ಅನ್ಯದೇಶೀಯರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಓದಿದನು.</verse>
			</chapter>
			<chapter number="9">
				<verse number="1">ಜೋರ್ಡನ್ ಹೊಳೆಯ ಆಚೆ ಬೆಟ್ಟದ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು.</verse>
				<verse number="2">ಯೆಹೋಶುವನಿಗೂ ಇಸ್ರಯೇಲರಿಗೂ ವಿರುದ್ಧ ಯುದ್ಧಮಾಡಬೇಕೆಂದು ಒಮ್ಮನಸ್ಸಿನಿಂದ ಕೂಡಿಕೊಂಡರು.</verse>
				<verse number="3">ಜೆರಿಕೋದವರನ್ನು ಮತ್ತು ಆಯಿ ಜನರನ್ನು ಯೆಹೋಶುವನು ಸಂಹರಿಸಿದ ಸುದ್ದಿ ಗಿಬ್ಯೋನಿನ ನಿವಾಸಿಗಳಿಗೆ ಮುಟ್ಟಿತು.</verse>
				<verse number="4">ಅವರು ಒಂದು ಉಪಾಯವನ್ನು ಹೂಡಿದರು. ಅದೇನೆಂದರೆ - ಅವರು ತಮ್ಮ ಕತ್ತೆಗಳ ಮೇಲೆ ಹಳೆಯ ಗೋಣಿತಟ್ಟುಗಳನ್ನು ಹಾಕಿ ಅವುಗಳ ಮೇಲೆ ತೇಪೆ ಹಾಕಿದ ದ್ರಾಕ್ಷಾರಸದ ಹಳೆಯ ಬುದ್ದಲಿಗಳನ್ನು ಹೇರಿದರು.</verse>
				<verse number="5">ಹರಿದುಹೋಗಿದ್ದ ಹಳೆಯ ಕೆರಗಳನ್ನು ಮೆಟ್ಟಿಕೊಂಡರು. ಹಳೆಯ ಬಟ್ಟೆಬರೆಗಳನ್ನು ಹಾಕಿಕೊಂಡರು. ಒಣರೊಟ್ಟಿ ಚೂರುಗಳನ್ನು ಬುತ್ತಿಯಾಗಿ ಕಟ್ಟಿಕೊಂಡರು.</verse>
				<verse number="6">ತಾವೂ ರಾಯಭಾರಿಗಳೆಂದು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಬಂದರು. ಅವನಿಗೂ ಇಸ್ರಯೇಲರಿಗೂ, “ನಾವು ದೂರದೇಶದಿಂದ ಬಂದವರು. ನೀವು ನಮ್ಮ ಸಂಗಡ ಒಂದು ಒಪ್ಪಂದ ಮಾಡಿಕೊಳ್ಳಿ,” ಎಂದು ಕೇಳಿಕೊಂಡರು.</verse>
				<verse number="7">ಆಗ ಇಸ್ರಯೇಲರು ಹಿವ್ವಿಯರಾದ ಅವರಿಗೆ, “ಬಹುಶಃ ನೀವು ನಮ್ಮ ನಾಡಿನ ನಿವಾಸಿಗಳೇ ಆಗಿರಬಹುದು. ಆದುದರಿಂದ ನಾವು ನಿಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳುವುದು ಹೇಗೆ?” ಎಂದು ಉತ್ತರಿಸಿದರು.</verse>
				<verse number="8">ಅವರು ಯೆಹೋಶುವನಿಗೆ, “ನಾವು ನಿಮ್ಮ ಸೇವಕರು” ಎಂದರು. “ನೀವು ಯಾರು? ಎಲ್ಲಿಯವರು?” ಎಂದು ಆತ ವಿಚಾರಿಸಲು</verse>
				<verse number="9">ಅವರು, “ನಿಮ್ಮ ಸೇವಕರಾದ ನಾವು ನಿಮ್ಮ ದೇವರಾದ ಸರ್ವೇಶ್ವರನ ನಾಮ ಮಹತ್ತನ್ನು ಕೇಳಿ ಬಹುದೂರ ದೇಶದಿಂದ ಬಂದಿದ್ದೇವೆ. ಆ ನಿಮ್ಮ ದೇವರು ಈಜಿಪ್ಟಿನಲ್ಲಿ ನಡೆಸಿದ ಮಹತ್ಕಾರ್ಯಗಳ ಸುದ್ದಿಯನ್ನು ನಮ್ಮ ಹಿರಿಯರೂ ದೇಶನಿವಾಸಿಗಳೂ ಕೇಳಿದ್ದಾರೆ.</verse>
				<verse number="10">ಹೆಷ್ಬೋನಿನ ಅರಸ ಸೀಹೋನ್ ಮತ್ತು ಅಷ್ಟರೋತಿನಲ್ಲಿ ವಾಸವಾಗಿದ್ದ ಬಾಷಾನಿನ ಅರಸ ಓಗ್ ಎಂಬ ಈ ಇಬ್ಬರು ಅಮೋರಿಯರಿಗೆ ಆ ದೇವರು ಮಾಡಿದ್ದೆಲ್ಲವನ್ನು ಕೇಳಿದ್ದಾರೆ.</verse>
				<verse number="11">ಅವರು ನಮ್ಮನ್ನು ಇಲ್ಲಿಗೆ ಕಳಿಸುತ್ತಾ, ‘ನೀವು ಪ್ರಯಾಣಕ್ಕಾಗಿ ಬುತ್ತಿ ಕಟ್ಟಿಕೊಂಡು ಹೋಗಿ ಇಸ್ರಯೇಲರನ್ನು ಎದುರುಗೊಳ್ಳಿ - ನಾವು ನಿಮ್ಮ ಸೇವಕರು, ನೀವು ನಮ್ಮ ಸಂಗಡ ಒಪ್ಪಂದ ಮಾಡಿಕೊಳ್ಳಿ ಎಂದು ವಿನಂತಿಸಿ,’ ಎಂದು ಹೇಳಿದರು.</verse>
				<verse number="12">ನಾವು ನಿಮ್ಮನ್ನು ಭೇಟಿಯಾಗುವುದಕ್ಕಾಗಿ ಮನೆಬಿಟ್ಟು ಹೊರಟಾಗ ಪ್ರಯಾಣಕ್ಕೆಂದು ತೆಗೆದುಕೊಂಡ ಈ ರೊಟ್ಟಿ ಬಿಸಿಯಾಗಿತ್ತು. ಈಗ ಒಣಗಿ ಚೂರು ಚೂರಾಗಿದೆ ನೋಡಿ.</verse>
				<verse number="13">ದ್ರಾಕ್ಷಾರಸ ತುಂಬಿಸಿಕೊಂಡಿದ್ದ ಈ ಬುದ್ದಲಿಗಳು ಹೊಸದಾಗಿದ್ದವು. ಈಗ ಹರಿದುಹೋಗಿವೆ. ನಮ್ಮ ಬಟ್ಟೆಬರೆಗಳು ಹಾಗೂ ಕೆರಗಳು ದೀರ್ಘ ಪ್ರಯಾಣದಿಂದ ಸವೆದುಹೋಗಿವೆ,” ಎಂದು ವಿವರಿಸಿದರು.</verse>
				<verse number="14">ಆಗ ಇಸ್ರಯೇಲರು ಅವರ ಬುತ್ತಿಯಲ್ಲಿ ಸ್ವಲ್ಪ ತೆಗೆದುಕೊಂಡರು. ಆದರೆ ಸರ್ವೇಶ್ವರ ಸ್ವಾಮಿಯ ಅಪ್ಪಣೆಯನ್ನು ಕೇಳಲಿಲ್ಲ.</verse>
				<verse number="15">ಯೆಹೋಶುವ ಅವರೊಡನೆ, “ನಿಮ್ಮ ಜೀವವನ್ನು ಕಾಪಾಡುತ್ತೇವೆ” ಎಂದು ಶಾಂತಿಸಂಧಾನ ಮಾಡಿಕೊಂಡನು. ಸಭೆಯ ನಾಯಕರೂ ಅಂತೆಯೇ ಪ್ರಮಾಣ ಮಾಡಿದರು.</verse>
				<verse number="16">ಈ ಒಪ್ಪಂದವಾದ ಮೂರು ದಿನಗಳ ಮೇಲೆ ಅವರು ತಮ್ಮ ನೆರೆಯವರೆಂದೂ ತಮ್ಮ ಮಧ್ಯೆ ವಾಸಿಸುವವರೆಂದೂ ಇಸ್ರಯೇಲರಿಗೆ ಗೊತ್ತಾಯಿತು.</verse>
				<verse number="17">ಹೇಗೆಂದರೆ - ಮೂರನೆಯ ದಿನದಂದು ಇಸ್ರಯೇಲರು ಹೊರಟು ಗಿಬ್ಯೋನ್, ಕೆಫೀರಾ, ಬೇರೋತ್, ಕಿರ್ಯತ್ಯಾರೀಮ್ ಎಂಬ ಊರುಗಳನ್ನು ಸೇರಿದರು. ಆಗ ಆ ಊರುಗಳು ಆ ಜನರದ್ದೇ ಎಂದು ಗೊತ್ತಾಯಿತು.</verse>
				<verse number="18">ಸಭೆಯ ನಾಯಕರು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಆ ಜನರಿಗೆ ಪ್ರಮಾಣ ಮಾಡಿದ್ದರಿಂದ ಇಸ್ರಯೇಲರು ಅವರನ್ನು ಕೊಲ್ಲಲಿಲ್ಲ. ಆದರೆ ಸಭಿಕರೆಲ್ಲರುತಮ್ಮ ನಾಯಕರಿಗೆ ವಿರುದ್ಧ ಗೊಣಗುಟ್ಟಿದರು.</verse>
				<verse number="19">ಆಗ ನಾಯಕರೆಲ್ಲರು ಸಭೆಯ ಎಲ್ಲ ಸದಸ್ಯರಿಗೆ, “ನಾವು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಅವರಿಗೆ ಪ್ರಮಾಣ ಮಾಡಿದ್ದರಿಂದ ಅವರನ್ನು ಮುಟ್ಟಲಾಗದು.</verse>
				<verse number="20">ನಾವು ಇಟ್ಟ ಅಪ್ಪಣೆಯ ನಿಮಿತ್ತ ದೇವರ ಕೋಪ ನಮ್ಮ ಮೇಲೆ ಬಾರದಂತೆ ಅವರನ್ನು ಜೀವದಿಂದ ಉಳಿಸಬೇಕು. ನಾವು ಹೀಗೆ ಮಾಡೋಣ: ಅವರನ್ನು ಬದುಕಲು ಬಿಟ್ಟುಬಿಡಿ.</verse>
				<verse number="21">ಆದರೆ ನಮ್ಮ ಜನರಿಗೆ ಅವರು ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಲಿ,” ಎಂದು ಹೇಳಿದರು. ನಾಯಕರ ಮಾತಿನಂತೆಯೇ ಆಯಿತು.</verse>
				<verse number="22">ಯೆಹೋಶುವನು ಗಿಬ್ಯೋನ್ಯರನ್ನು ಕರೆಸಿ, “ನೀವು ನಮ್ಮ ನಡುವೆ ವಾಸಿಸುವವರಾಗಿದ್ದರೂ ಬಹುದೂರದವರೆಂದು ಹೇಳಿ ನಮ್ಮನ್ನು ವಂಚಿಸಿದ್ದೇಕೆ?</verse>
				<verse number="23">ಇದರಿಂದಾಗಿ ನೀವು ಶಾಪಗ್ರಸ್ತರು! ನೀವು ಯಾವಾಗಲೂ ಊಳಿಗದವರಾಗಿದ್ದು, ನನ್ನ ದೇವರ ಮಂದಿರಕ್ಕೆ ಕಟ್ಟಿಗೆ ಕಡಿಯುವವರೂ ನೀರು ತರುವವರೂ ಆಗಿರಬೇಕು,” ಎಂದನು.</verse>
				<verse number="24">ಅವರು ಯೆಹೋಶುವನಿಗೆ, “ನಿಮ್ಮ ದೇವರಾದ ಸರ್ವೇಶ್ವರ ತಮ್ಮ ದಾಸ ಮೋಶೆಗೆ, ‘ನಾನು ನಿಮಗೆ ಈ ದೇಶವನ್ನೆಲ್ಲ ಕೊಡುವಾಗ ನೀವು ಇದರ ನಿವಾಸಿಗಳನ್ನೆಲ್ಲಾ ಸಂಹರಿಸಬೇಕು’ ಎಂದು ಆಜ್ಞಾಪಿಸಿದ್ದಾರೆಂದು ಕೇಳಿ ನಮ್ಮ ಪ್ರಾಣ ತೆಗೆಯುವಿರೆಂದು ಹೆದರಿ ಹೀಗೆ ಮಾಡಿದೆವು.</verse>
				<verse number="25">ಇಗೋ, ಈಗ ನಾವು ನಿಮ್ಮ ಕೈಯಲ್ಲಿ ಇದ್ದೇವೆ. ನಿಮಗೆ ಯಾವುದು ಒಳ್ಳೆಯದು, ನ್ಯಾಯವಾದುದು ಎಂದು ತೋರುತ್ತದೋ ಅದರಂತೆ ನಮಗೆ ಮಾಡಿ,” ಎಂದು ಉತ್ತರಕೊಟ್ಟರು.</verse>
				<verse number="26">ಯೆಹೋಶುವನು ತಾನು ಮೊದಲೇ ಹೇಳಿದಂತೆ ಮಾಡಿದನು. ಅವರನ್ನು ಇಸ್ರಯೇಲರ ಕೈಯಿಂದ ಹತರಾಗದಂತೆ ತಪ್ಪಿಸಿದನು.</verse>
				<verse number="27">ಸಭೆಗೂ ಸರ್ವೇಶ್ವರ ಆಯ್ದುಕೊಂಡ ಸ್ಥಳದಲ್ಲಿ ಕಟ್ಟಲಾಗುವ ಬಲಿಪೀಠಕ್ಕೂ ಕಟ್ಟಿಗೆ ಕಡಿಯುವವರನ್ನಾಗಿ ಹಾಗೂ ನೀರು ತರುವವರನ್ನಾಗಿ ನೇಮಿಸಿದನು. ಅವರು ಇಂದಿನವರೆಗೂ ಅದೇ ಊಳಿಗದಲ್ಲಿದ್ದಾರೆ.</verse>
			</chapter>
			<chapter number="10">
				<verse number="1">ಯೆಹೋಶುವನು ಆಯಿ ನಗರವನ್ನು ಅದರ ಅರಸನನ್ನು ಹಿಡಿದು ಜೆರಿಕೋವನ್ನೂ ಅದರ ಅರಸನನ್ನೂ ಹೇಗೋ ಹಾಗೆ ಸಂಹರಿಸಿಬಿಟ್ಟನೆಂದು ಜೆರುಸಲೇಮಿನ ಅರಸ ಅದೋನೀಚೆದೆಕನು ತಿಳಿದುಕೊಂಡನು.</verse>
				<verse number="2">ಆಯಿ ನಗರಕ್ಕಿಂತ ದೊಡ್ಡದೂ ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿದ್ದ ಗಿಬ್ಯೋನ್ ನಗರದಲ್ಲಿ ಇರುವ ಜನರೆಲ್ಲರು ಯುದ್ಧವೀರರಾಗಿದ್ದರೂ ಇಸ್ರಯೇಲರ ನಡುವೆ ಜೀವದಿಂದುಳಿಯಲು ಅವರ ಸಂಗಡ ಸಂಧಾನ ಮಾಡಿಕೊಂಡಿದ್ದಾರೆ ಎಂಬುದನ್ನು ಕೂಡ ಕೇಳಿ ಅವನು ಬಹಳವಾಗಿ ಭಯಪಟ್ಟನು.</verse>
				<verse number="3">ಆದುದರಿಂದ ಹೆಬ್ರೋನಿನ ಅರಸ ಹೋಹಾಮ್, ಯರ್ಮೂತಿನ ಅರಸ ಪಿರಾಮ್, ಲಾಕೀಷಿನ ಅರಸ ಯಾಫೀಯ, ಎಗ್ಲೋನಿನ ಅರಸ ದೆಬೀರ್ ಇವರ ಬಳಿಗೆ ದೂತರನ್ನು ಕಳುಹಿಸಿದನು.</verse>
				<verse number="4">“ನೀವು ಬಂದು ನನಗೆ ಸಹಾಯಮಾಡಿ, ನಾವು ಯೆಹೋಶುವನೊಂದಿಗೂ ಇಸ್ರಯೇಲರೊಂದಿಗೂ ಒಪ್ಪಂದ ಮಾಡಿಕೊಂಡು ಗಿಬ್ಯೋನ್ಯರನ್ನು ಸೋಲಿಸೋಣ,” ಎಂದು ಹೇಳಿಕಳಿಸಿದನು.</verse>
				<verse number="5">ಅಂತೆಯೇ ಜೆರುಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ನಗರಗಳ ಐದುಮಂದಿ ಅಮೋರಿಯ ರಾಜರು ದಂಡೆತ್ತಿ ಕೂಡಿಬಂದರು. ಗಿಬ್ಯೋನಿಗೆ ಮುತ್ತಿಗೆ ಹಾಕಿ ಯುದ್ಧಮಾಡಿದರು.</verse>
				<verse number="6">ಗಿಬ್ಯೋನ್ಯರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ದೂತರನ್ನು ಕಳಿಸಿದರು. “ನಿಮ್ಮ ಸೇವಕರಾದ ನಮ್ಮನ್ನು ಕೈಬಿಡಬೇಡಿ, ಬೇಗನೆ ಬಂದು ಸಹಾಯ ಮಾಡಿ. ನಮಗೆ ವಿರುದ್ಧ ಕೂಡಿಬಂದಿರುವ ಈ ಬೆಟ್ಟದ ಸೀಮೆಯ ಎಲ್ಲ ಅಮೋರಿಯ ರಾಜರಿಂದ ನಮ್ಮನ್ನು ತಪ್ಪಿಸಿ,” ಎಂದು ಬೇಡಿಕೊಂಡರು.</verse>
				<verse number="7">ಆಗ ಯೆಹೋಶುವ ಎಲ್ಲಾ ಯೋಧರ ಮತ್ತು ಯುದ್ಧವೀರರ ಸಮೇತ ಗಿಲ್ಗಾಲಿನಿಂದ ಹೊರಟರು.</verse>
				<verse number="8">ಸರ್ವೇಶ್ವರ ಸ್ವಾಮಿ ಯೆಹೋಶುವನಿಗೆ, “ಹೆದರಬೇಡ, ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವುದಿಲ್ಲ,” ಎಂದರು.</verse>
				<verse number="9">ಯೆಹೋಶುವನು ಗಿಲ್ಗಾಲ್ ಬಿಟ್ಟು ರಾತ್ರಿಯೆಲ್ಲಾ ಪ್ರಯಾಣ ಮಾಡಿ ತಟ್ಟನೆ ಅವರ ಮೇಲೆ ಬಿದ್ದನು.</verse>
				<verse number="10">ಆ ಅಮೋರಿಯರಲ್ಲಿ ಇಸ್ರಯೇಲರ ಬಗ್ಗೆ ಸರ್ವೇಶ್ವರ ಭಯ ಹುಟ್ಟಿಸಿದರು. ಆದುದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಸಂಪೂರ್ಣವಾಗಿ ಸೋಲಿಸಿ ಬೇತ್ ಹೋರೋನ್ ಎಂಬ ಮೇಡು ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೆ ಅವರನ್ನು ಹಿಂದಟ್ಟಿ ಸಂಹರಿಸಿದನು.</verse>
				<verse number="11">ಅವರು ಇಸ್ರಯೇಲರಿಗೆ ಬೆಂಗೊಟ್ಟು ಬೇತ್ ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಸರ್ವೇಶ್ವರ ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಈ ಕಾರಣ ಅನೇಕರು ಸತ್ತರು. ಇಸ್ರಯೇಲರ ಕತ್ತಿಗೆ ಈಡಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚುಮಂದಿ.</verse>
				<verse number="12">ಸರ್ವೇಶ್ವರ ಅಮೋರಿಯರನ್ನು ಇಸ್ರಯೇಲರಿಗೆ ವಶಪಡಿಸಿದ ದಿನದಂದು ಯೆಹೋಶುವನು ಸರ್ವೇಶ್ವರನಲ್ಲಿ ಒಂದು ವಿಜ್ಞಾಪನೆ ಮಾಡಿ ಇಸ್ರಯೇಲರ ಕಣ್ಮುಂದೆಯೇ, “ಸೂರ್ಯನೇ, ನೀ ನಿಲ್ಲು ಗಿಬ್ಯೋನಿನಲ್ಲೇ; ಚಂದ್ರನೇ, ನೀ ನಿಲ್ಲು ಅಯ್ಯಾಲೋನ್ ಕಣಿವೆಯಲ್ಲೇ” ಎಂದು ಆಜ್ಞಾಪಿಸಿದನು.</verse>
				<verse number="13">ಇಸ್ರಯೇಲರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವ ತನಕ ಸೂರ್ಯಚಂದ್ರರು ಹಾಗೆಯೇ ನಿಂತರು. ಇದನ್ನು ‘ಯಾಷಾರ್’ ಗ್ರಂಥದಲ್ಲಿ ಬರೆದಿದೆಯಲ್ಲವೆ? ಹೀಗೆ ಸೂರ್ಯ ಮುಳುಗಲು ಆತುರಪಡದೆ ಹೆಚ್ಚುಕಡಿಮೆ ಒಂದು ದಿನವೆಲ್ಲ ಆಕಾಶದ ಮಧ್ಯದಲ್ಲೆ ನಿಂತಿತು.</verse>
				<verse number="14">ಆ ಪ್ರಕಾರ ಹಿಂದೆಯಾಗಲಿ ಮುಂದೆಯಾಗಲಿ ಸರ್ವೇಶ್ವರ ಒಬ್ಬ ಮನುಷ್ಯನ ಮಾತಿಗೆ ಕಿವಿಗೊಟ್ಟಂಥ ದಿವಸ ಇಲ್ಲವೇ ಇಲ್ಲ! ಸರ್ವೇಶ್ವರಸ್ವಾಮಿ ತಾವೇ ಇಸ್ರಯೇಲರ ಪರವಾಗಿ ಯುದ್ಧಮಾಡುತ್ತಿದ್ದರು.</verse>
				<verse number="15">ಯೆಹೋಶುವನು ಇಸ್ರಯೇಲರೆಲ್ಲರೊಂದಿಗೆ ಗಿಲ್ಗಾಲಿನ ಪಾಳೆಯಕ್ಕೆ ಹಿಂದಿರುಗಿದನು.</verse>
				<verse number="16">ಆ ಐದು ಮಂದಿ ಅರಸರು ಓಡಿಹೋಗಿ ಮಕ್ಕೇದದ ಗವಿಯಲ್ಲಿ ಅವಿತುಕೊಂಡರು.</verse>
				<verse number="17">ಜನರು ಯೆಹೋಶುವನಿಗೆ, “ಆ ಐದುಮಂದಿ ನಮಗೆ ಸಿಕ್ಕಿದ್ದಾರೆ. ಅವರು ಮಕ್ಕೇದದ ಗವಿಯಲ್ಲಿ ಅವಿತುಕೊಂಡಿದ್ದಾರೆ,” ಎಂದು ತಿಳಿಸಿದರು.</verse>
				<verse number="18">ಆಗ ಯೆಹೋಶುವನು ಅವರಿಗೆ, “ಆ ಗವಿಯ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿ ಕಾಯುವುದಕ್ಕೆ ಕೆಲವರನ್ನಿಡಿ. ನೀವಾದರೋ ಅಲ್ಲೇ ನಿಂತುಕೊಳ್ಳಬೇಡಿ. ಬೇಗನೆ ಹಿಂದಟ್ಟಿ ಹಿಂದಾದ ವ್ಯಕ್ತಿಗಳನ್ನು ಹತಮಾಡುತ್ತಾ ಹೋಗಿ.</verse>
				<verse number="19">ಅವರನ್ನು ಅವರ ನಗರಗಳಲ್ಲಿ ಸೇರಗೊಡಿಸಬೇಡಿ. ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾರಲ್ಲವೆ?” ಎಂದನು.</verse>
				<verse number="20">ಹೀಗೆ ಯೆಹೋಶುವನು ಹಾಗೂ ಇಸ್ರಯೇಲರು ಅವರನ್ನು ಸಂಪೂರ್ಣವಾಗಿ ಸೋಲಿಸಿ ಸಂಹರಿಸಿದರು. ಕೆಲವರು ಮಾತ್ರ ತಪ್ಪಿಸಿಕೊಂಡು ಕೋಟೆಕೊತ್ತಲಗಳಿದ್ದ ಪಟ್ಟಣಗಳನ್ನು ಸೇರಿಕೊಂಡರು.</verse>
				<verse number="21">ಇಸ್ರಯೇಲರಾದರೋ ಮಕ್ಕೇದದಲ್ಲಿದ್ದ ಯೆಹೋಶುವನ ಬಳಿಗೆ ಸುರಕ್ಷಿತವಾಗಿ ಬಂದರು. ಇಸ್ರಯೇಲರ ವಿರುದ್ಧ ಯಾರೊಬ್ಬನೂ ನಾಲಿಗೆ ಮಸೆಯಲಿಲ್ಲ.</verse>
				<verse number="22">ಅನಂತರ ಯೆಹೋಶುವನು ಜನರಿಗೆ, “ಗವಿಯ ಬಾಯನ್ನು ತೆರೆದು ಆ ಐದು ಮಂದಿ ಅರಸರನ್ನು ನನ್ನ ಬಳಿಗೆ ತನ್ನಿ,” ಎಂದನು.</verse>
				<verse number="23">ಅವರು ಹೋಗಿ ಜೆರುಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್ ಮತ್ತು ಎಗ್ಲೋನ್ ಎಂಬ ನಗರಗಳ ಐದು ಮಂದಿ ಅರಸರನ್ನು ಗವಿಯಿಂದ ಎಳೆದು ಅವನ ಬಳಿಗೆ ತಂದರು.</verse>
				<verse number="24">ತಂದ ಮೇಲೆ ಯೆಹೋಶುವನು ಎಲ್ಲಾ ಇಸ್ರಯೇಲರನ್ನು ಕರೆಸಿ ತನ್ನ ಜೊತೆಯಲ್ಲಿ ಬಂದಿದ್ದ ಸೇನಾಧಿಪತಿಗಳಿಗೆ, “ಹತ್ತಿರ ಬಂದು ಆ ಅರಸರ ಕೊರಳಿನ ಮೇಲೆ ನಿಮ್ಮ ಪಾದಗಳನ್ನಿಡಿ,” ಎಂದು ಹೇಳಿದನು. ಅಂತೆಯೇ ಅವರು ಹತ್ತಿರ ಬಂದು ಕುತ್ತಿಗೆಯ ಮೇಲೆ ಕಾಲಿಟ್ಟರು.</verse>
				<verse number="25">ಆಗ ಅವನು ಅವರಿಗೆ, “ಅಂಜಬೇಡಿ, ಕಳವಳಗೊಳ್ಳಬೇಡಿ, ಸ್ಥಿರಚಿತ್ತರಾಗಿರಿ, ಧೈರ್ಯದಿಂದಿರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲ ಶತ್ರುಗಳಿಗೂ ಸರ್ವೇಶ್ವರ ಹೀಗೆಯೇ ಮಾಡುವರು,” ಎಂದು ಹೇಳಿದರು.</verse>
				<verse number="26">ಅನಂತರ ಆ ಅರಸರನ್ನು ಕೊಲ್ಲಿಸಿ ಐದು ಮರಗಳಿಗೆ ನೇತುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಅಲ್ಲೇ ತೂಗಾಡುತ್ತಿದ್ದವು.</verse>
				<verse number="27">ಸೂರ್ಯಾಸ್ತಮಾನದ ಹೊತ್ತಿಗೆ ಜನರು ಯೆಹೋಶುವನ ಅಪ್ಪಣೆಯಂತೆ ಅವುಗಳನ್ನು ಮರಗಳಿಂದ ಕೆಳಗಿಳಿಸಿ ಅವರು ಅಡಗಿಕೊಂಡಿದ್ದ ಗವಿಯಲ್ಲೇ ಹಾಕಿ ಅದರ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿದರು. ಆ ಕಲ್ಲುಗಳು ಇಂದಿನವರೆಗೂ ಅಲ್ಲೇ ಇವೆ.</verse>
				<verse number="28">ಅದೇ ದಿನ ಯೆಹೋಶುವನು ಮಕ್ಕೆದವನ್ನು ಸ್ವಾಧೀನಪಡಿಸಿಕೊಂಡನು. ಅದರ ರಾಜನನ್ನೂ ಪ್ರಜೆಗಳೆಲ್ಲರನ್ನೂ ಕತ್ತಿಗೆ ತುತ್ತಾಗಿಸಿದನು.</verse>
				<verse number="29">ಯೆಹೋಶುವನು ಜನರೆಲ್ಲರ ಸಮೇತ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ ಅಲ್ಲಿಯವರೊಡನೆ ಯುದ್ಧಮಾಡಿದನು.</verse>
				<verse number="30">ಸರ್ವೇಶ್ವರ ಅದನ್ನೂ ಅದರ ಅರಸನನ್ನೂ ಇಸ್ರಯೇಲರ ಕೈವಶಮಾಡಿದರು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಗೆ ತುತ್ತಾಗಿಸಿದರು. ಜೆರಿಕೋವಿನ ಅರಸನಿಗಾದ ಗತಿಯೇ ಇವರ ಅರಸನಿಗೂ ಆಯಿತು.</verse>
				<verse number="31">ಅಲ್ಲಿಂದ ಯೆಹೋಶುವನು ಇಸ್ರಯೇಲರ ಸಹಿತ ಲಾಕೀಷಿಗೆ ಹೋಗಿ ಮುತ್ತಿಗೆ ಹಾಕಿ ಯುದ್ಧಮಾಡಿದನು.</verse>
				<verse number="32">ಸರ್ವೇಶ್ವರ ಇದನ್ನೂ ಇಸ್ರಯೇಲರ ಕೈಗೊಪ್ಪಿಸಿದರು. ಎಂದೇ ಅವರು ಅದನ್ನು ಎರಡನೆಯ ದಿನದಲ್ಲಿ ಸ್ವಾಧೀನಮಾಡಿಕೊಂಡು ಅದನ್ನೂ ಅದರ ಜನರನ್ನೂ ಸಂಹರಿಸಿಬಿಟ್ಟರು. ಲಿಬ್ನದವರಿಗಾದ ಗತಿಯೇ ಇವರಿಗೂ ಆಯಿತು.</verse>
				<verse number="33">ಇದಲ್ಲದೆ ಯೆಹೋಶುವನು ಲಾಕೀಷಿನವರ ಸಹಾಯಕ್ಕೆ ಬಂದ ಗೆಜೆರಿನ ಅರಸನಾದ ಹೋರಾಮನನ್ನೂ ಅವನ ಪ್ರಜೆಗಳೆಲ್ಲರನ್ನೂ ಸದೆಬಡಿದನು. ಒಬ್ಬನೂ ಉಳಿಯಲಿಲ್ಲ.</verse>
				<verse number="34">ತರುವಾಯ ಯೆಹೋಶುವನು ಲಾಕೀಷನ್ನು ಬಿಟ್ಟು ಇಸ್ರಯೇಲರೆಲ್ಲರ ಸಹಿತ ಎಗ್ಲೋನಿಗೆ ಬಂದು ಮುತ್ತಿಗೆಹಾಕಿ ಯುದ್ಧಮಾಡಿದನು.</verse>
				<verse number="35">ಅವರು ಅದೇ ದಿನದಲ್ಲಿ ಅದನ್ನು ಹಿಡಿದು ಲಾಕೀಷಿನಲ್ಲಿ ಮಾಡಿದಂತೆಯೇ ಅದನ್ನೂ ಅದರ ಜನರೆಲ್ಲರನ್ನೂ ಕೊಂದು ನಾಶಮಾಡಿದರು.</verse>
				<verse number="36">ಅನಂತರ ಯೆಹೋಶುವನು ಮತ್ತು ಇಸ್ರಯೇಲರು ಎಗ್ಲೋನನ್ನು ಬಿಟ್ಟು ಹೆಬ್ರೋನಿಗೆ ಹೋಗಿ ಅದಕ್ಕೆ ವಿರುದ್ಧ ಯುದ್ಧಮಾಡಿದರು.</verse>
				<verse number="37">ಅದಕ್ಕೂ ಅದಕ್ಕೆ ಸೇರಿದ ಊರುಗಳನ್ನೂ ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಗೆ ಈಡಾಗಿಸಿದರು. ಎಗ್ಲೋನಿನಲ್ಲಿ ಹೇಗೋ ಹಾಗೆಯೇ ಇಲ್ಲಿಯೂ ಒಬ್ಬನನ್ನೂ ಉಳಿಸಲಿಲ್ಲ. ನಗರವನ್ನೂ ಜನರನ್ನೂ ನಾಶಮಾಡಿದರು.</verse>
				<verse number="38">ಅಲ್ಲಿಂದ ಯೆಹೋಶುವನು ಹಾಗು ಎಲ್ಲ ಇಸ್ರಯೇಲರು ದೆಬೀರಿಗೆ ಬಂದು ಅಲ್ಲಿಯವರೊಡನೆ ಯುದ್ಧಮಾಡಿದರು.</verse>
				<verse number="39">ಅದನ್ನು ಹಾಗು ಅದಕ್ಕೆ ಸೇರಿದ ಊರುಗಳನ್ನು ಹಿಡಿದುಕೊಂಡರು. ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ನಾಶಮಾಡಿದರು. ಒಬ್ಬನನ್ನೂ ಉಳಿಸಲಿಲ್ಲ. ಹೆಬ್ರೋನಿಗೂ ಅದರ ಅರಸನಿಗೂ ಆದ ಗತಿಯೇ ದೆಬೀರಿಗೂ ಅದರ ಅರಸನಿಗೂ ಆಯಿತು.</verse>
				<verse number="40">ಹೀಗೆ ಯೆಹೋಶುವನು ಮಲೆನಾಡಿನ ಪ್ರದೇಶ, ದಕ್ಷಿಣಪ್ರಾಂತ್ಯ, ಇಳಿಜಾರಿನ ಪ್ರದೇಶ, ಬೆಟ್ಟಗುಡ್ಡಗಳ ಬುಡ ಪ್ರದೇಶ ಇವುಗಳನ್ನು ಸ್ವತಂತ್ರಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಯೇಲ್ ದೇವರಾದ ಸರ್ವೇಶ್ವರನ ಆಜ್ಞೆಯಂತೆ ಜೀವವಿರುವುದೆಲ್ಲವನ್ನು ಶಾಪನಾಶಕ್ಕೆ ಗುರಿಮಾಡಿದನು.</verse>
				<verse number="41">ಕಾದೇಶ್ ಬರ್ನೇಯದಿಂದ ಗಾಜಾ ಊರಿನವರೆಗೂ ಗೋಷೆನ್ ಪ್ರಾಂತ್ಯದಿಂದ ಗಿಬ್ಯೋನಿನವರೆಗೂ ಎಲ್ಲರನ್ನು ಸೋಲಿಸಿದನು.</verse>
				<verse number="42">ಇಸ್ರಯೇಲ್ ದೇವರಾದ ಸರ್ವೇಶ್ವರ ಅವರ ಪರವಾಗಿ ಯುದ್ಧಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿ ವಶಮಾಡಿಕೊಂಡನು.</verse>
				<verse number="43">ಇದಾದ ಮೇಲೆ ಯೆಹೋಶುವನು ಎಲ್ಲ ಇಸ್ರಯೇಲರೊಡನೆ ಗಿಲ್ಗಾಲಿನಲ್ಲಿದ್ದ ತನ್ನ ಪಾಳೆಯಕ್ಕೆ ಹಿಂದಿರುಗಿದನು.</verse>
			</chapter>
			<chapter number="11">
				<verse number="1">ಹಾಚೋರಿನ ಅರಸ ಯಾಬೀನನು ಇದನ್ನೆಲ್ಲಾ ಕೇಳಿ ಯೋಬಾಬನೆಂಬ ಮದೋನಿನ ಅರಸನಿಗೂ ಶಿಮ್ರೋನಿನ ಅರಸನಿಗೂ ಹಾಗು ಅಕ್ಷಾಫಿನ ಅರಸನಿಗೂ ಕರೆಕಳಿಸಿದನು.</verse>
				<verse number="2">ಉತ್ತರದಿಕ್ಕಿನ ಪರ್ವತಪ್ರದೇಶ, ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ಕಣಿವೆಪ್ರದೇಶ, ಇಳಿಜಾರು ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಮಲೆನಾಡಿನ ಪ್ರದೇಶ, ಇವುಗಳ ಅರಸರಿಗೂ</verse>
				<verse number="3">ಪೂರ್ವ ಪಶ್ಚಿಮಗಳಲ್ಲಿರುವ ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಮಲೆನಾಡಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ನೋನಿನ ಬುಡದಲ್ಲಿ ಮಿಚ್ಪಾನಾಡಿನಲ್ಲಿದ್ದ ಹಿವ್ವಿಯರು ಇವರಿಗೂ ಹೇಳಿಕಳಿಸಿದನು.</verse>
				<verse number="4">ಅವರು ಒಡನೆ ಬಹುರಥಾಶ್ವಗಳಿಂದ ಕೂಡಿದ್ದ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಸೈನಿಕರು ಸಮುದ್ರ ತೀರದ ಮರಳಿನಂತೆ ಅಸಂಖ್ಯರಾಗಿದ್ದರು.</verse>
				<verse number="5">ಇಸ್ರಯೇಲರೊಡನೆ ಯುದ್ಧಮಾಡಲು ಅರಸರೆಲ್ಲರು ಒಟ್ಟುಗೂಡಿ ಮೇರೋಮ್ ಜಲಾಶಯದ ಬಳಿ ಇಳಿದುಕೊಂಡರು.</verse>
				<verse number="6">ಆಗ ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೀನು ಅವರಿಗೆ ಹೆದರಬೇಡ; ನಾಳೆ ಇದೇ ವೇಳೆಗೆ ಅವರನ್ನು ಇಸ್ರಯೇಲರಿಗೆ ಒಪ್ಪಿಸುವೆನು. ಇಸ್ರಯೇಲರು ಅವರನ್ನು ಹತಿಸಿಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕಡಿದು ರಥಗಳನ್ನು ಸುಟ್ಟುಬಿಡಬೇಕು,” ಎಂದರು.</verse>
				<verse number="7">ಯೆಹೋಶುವನು ತನ್ನ ಎಲ್ಲ ಯೋಧರೊಡನೆ ಹೊರಟು ಮೇರೋಮ್ ಜಲಾಶಯದ ಬಳಿಯಲ್ಲಿದ್ದ ಶತ್ರುಗಳ ಮೇಲೆ ಬಿದ್ದನು.</verse>
				<verse number="8">ಸರ್ವೇಶ್ವರ ಅವರನ್ನು ಇಸ್ರಯೇಲರ ಕೈವಶ ಮಾಡಿದರು. ಇವರು ಅವರನ್ನು ದೊಡ್ಡ ಚೀದೋನ್ ಹಾಗು ಮಿಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಮತ್ತು ಪೂರ್ವ ದಿಕ್ಕಿನಲ್ಲಿರುವ ಮಿಚ್ಫೆಯ ಬಯಲಿನವರೆಗೂ ಹಿಂದಟ್ಟಿ, ಒಬ್ಬನೂ ಉಳಿಯದಂತೆ ಸದೆಬಡಿದರು.</verse>
				<verse number="9">ಯೆಹೋಶುವನು ಸರ್ವೇಶ್ವರನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕಡಿದು ರಥಗಳನ್ನು ಸುಟ್ಟುಬಿಟ್ಟನು.</verse>
				<verse number="10">ಕೂಡಲೆ ಯೆಹೋಶುವನು ಹಿಂದಿರುಗಿ ಹಾಚೋರನ್ನೂ ಅದರ ಅರಸನನ್ನೂ ಕತ್ತಿಯಿಂದ ಸಂಹರಿಸಿದನು. ಏಕೆಂದರೆ ಹಾಚೋರ್ ಪೂರ್ವಕಾಲದಲ್ಲಿ ಆ ರಾಜ್ಯಗಳಲ್ಲೆಲ್ಲಾ ಶ್ರೇಷ್ಠವಾದುದು.</verse>
				<verse number="11">ಇಸ್ರಯೇಲರು ಅದರಲ್ಲಿದ್ದ ಜನರನ್ನೆಲ್ಲಾ ಕತ್ತಿಗೆ ಈಡಾಗಿಸಿ ಹಾಚೋರ್ ನಗರವನ್ನು, ಪ್ರಾಣಿಯೊಂದೂ ಉಳಿಯದಂತೆ ಸುಟ್ಟುಬಿಟ್ಟರು.</verse>
				<verse number="12">ಯೆಹೋಶುವನು ಆ ಬೇರೆ ಅರಸರನ್ನು, ಅವರ ಎಲ್ಲ ನಗರಗಳನ್ನು ಹಿಡಿದು ಸರ್ವೇಶ್ವರನ ದಾಸ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ನಾಶಮಾಡಿದನು.</verse>
				<verse number="13">ಯೆಹೋಶುವನು ಸುಟ್ಟ ಹಾಚೋರ್ ಒಂದನ್ನು ಬಿಟ್ಟರೆ ಇಸ್ರಯೇಲರು ಮಲೆನಾಡಿನ ಬೇರೆ ಯಾವ ನಗರವನ್ನೂ ಸುಡಲಿಲ್ಲ.</verse>
				<verse number="14">ಅವುಗಳಲ್ಲಿದ್ದ ಪಶುಪ್ರಾಣಿಗಳನ್ನೂ ಸಾಮಾನು ಸರಂಜಾಮುಗಳನ್ನೂ ಇಸ್ರಯೇಲರು ಕೊಳ್ಳೆಹೊಡೆದರು. ಜನರನ್ನಾದರೋ ಒಬ್ಬರನ್ನೂ ಬಿಡದೆ ಕತ್ತಿಯಿಂದ ನಿರ್ಮೂಲಮಾಡಿದರು.</verse>
				<verse number="15">ಸರ್ವೇಶ್ವರನ ದಾಸ ಮೋಶೆ, ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಅದರಂತೆಯೇ ಯೆಹೋಶುವ ಮಾಡಿದನು. ಸರ್ವೇಶ್ವರ ಮೋಶೆಯ ಮುಖಾಂತರ ಆಜ್ಞಾಪಿಸಿದ್ದರಲ್ಲಿ ಯೆಹೋಶುವ ಒಂದನ್ನೂ ಮೀರಲಿಲ್ಲ.</verse>
				<verse number="16">ಹೀಗೆ ಮಲೆನಾಡಿನ ಪ್ರದೇಶ, ದಕ್ಷಿಣ ಪ್ರಾಂತ್ಯ, ಗೋಷೆನ್ ನಾಡು, ಇಳಿಜಾರಿನ ಪ್ರದೇಶ, ಕಣಿವೆ ಪ್ರದೇಶ, ಇಸ್ರಯೇಲ್ ನಾಡಿನ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಿಜಾರಿನ ಪ್ರದೇಶ ಇವೆಲ್ಲವೂ ಯೆಹೋಶುವನಿಗೆ ಸ್ವಾಧೀನವಾದವು.</verse>
				<verse number="17">ಅವನು ಸೇಯೀರಿನ ಹಾದಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನ್ ಕಣಿವೆಯಲ್ಲಿರುವ ಬಾಲ್ಗಾದ್ ನಗರದವರೆಗೂ ಇರುವ ಪ್ರದೇಶವನ್ನೆಲ್ಲಾ ತೆಗೆದುಕೊಂಡು ಅದರ ಅರಸರನ್ನೆಲ್ಲಾ ಹಿಡಿದು ಸಂಹರಿಸಿಬಿಟ್ಟನು.</verse>
				<verse number="18">ಯೆಹೋಶುವ ಈ ಎಲ್ಲಾ ಅರಸರೊಡನೆ ಬಹುದಿನಗಳ ತನಕ ಯುದ್ಧಮಾಡಿದನು.</verse>
				<verse number="19">ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರ ಹೊರತು ಯಾವ ನಗರದವರೂ ಇಸ್ರಯೇಲರೊಡನೆ ಒಪ್ಪಂದ ಮಾಡಿಕೊಳ್ಳಲಿಲ್ಲ. ಎಲ್ಲರನ್ನೂ ಯುದ್ಧದಿಂದಲೇ ವಶಮಾಡಿಕೊಳ್ಳಬೇಕಾಯಿತು.</verse>
				<verse number="20">ಏಕೆಂದರೆ ಸರ್ವೇಶ್ವರ ಅವರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದ್ದರು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಇಸ್ರಯೇಲರು ಅವರೆಲ್ಲರನ್ನು ಕರುಣೆ ಇಲ್ಲದೆ ಸಂಹರಿಸಿದರು.</verse>
				<verse number="21">ಅದೇ ಕಾಲದಲ್ಲಿ ಯೆಹೋಶುವನು ಹೆಬ್ರೋನ್, ದೆಬೀರ್ ಹಾಗೂ ಅನಾಬ್ ಎಂಬ ಊರುಗಳಲ್ಲೂ, ಜುದೇಯ ಮತ್ತು ಇಸ್ರಯೇಲ್ ಪ್ರಾಂತ್ಯಗಳ ಬೆಟ್ಟಗುಡ್ಡಗಳಲ್ಲೂ ಇದ್ದ ‘ಅನಾಕಿಮ್’ ಜನರನ್ನು ನಾಶಮಾಡಿ ಅವರ ನಗರಗಳನ್ನು ಹಾಳುಮಾಡಿದನು.</verse>
				<verse number="22">ಇಸ್ರಯೇಲರ ಪ್ರಾಂತ್ಯದಲ್ಲಿ ಜನರಾರೂ ಉಳಿಯಲಿಲ್ಲ. ಗಾಜಾ, ಗತೂರು, ಅಷ್ಡೋದ್ ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದರು.</verse>
				<verse number="23">ಸರ್ವೇಶ್ವರ ಮೋಶೆಯ ಮುಖಾಂತರ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವ ಹಿಡಿದುಕೊಂಡನು, ಇಸ್ರಯೇಲ್ ಕುಲಭಾಗಗಳಿಗನುಸಾರ ಅದನ್ನು ಹಂಚಿಕೊಟ್ಟನು. ಯುದ್ಧ ನಿಂತಿತು. ದೇಶದಲ್ಲೆಲ್ಲಾ ಶಾಂತಿಸಮಾಧಾನ ನೆಲೆಸಿತು.</verse>
			</chapter>
			<chapter number="12">
				<verse number="1">ಇಸ್ರಯೇಲರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಅರ್ನೋನ್ ಕಣಿವೆ ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನು ಮತ್ತು ಕಣಿವೆ ಪ್ರದೇಶದ ಪೂರ್ವಭಾಗವನ್ನು ಸ್ವಾಧೀನಮಾಡಿಕೊಂಡರು. ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.</verse>
				<verse number="2">ಅವರಲ್ಲಿ ಮೊದಲನೆಯವನು ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸ ಸೀಹೋನ್ ಎಂಬವನು. ಇವನ ರಾಜ್ಯ, ಅರ್ನೋನ್ ಕಣಿವೆಯ ಅಂಚಿನಲ್ಲಿ ಇರುವ ಅರೋಯೇರ್ ನಗರವನ್ನು ಮತ್ತು ಆ ಕಣಿವೆಯಲ್ಲೇ ಇರುವ ನಗರವನ್ನು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ನದಿಯ ತನಕವಿರುವ ಗಿಲ್ಯಾದಿನ ಅರ್ಧಪ್ರಾಂತ್ಯ,</verse>
				<verse number="3">ಹಾಗೂ ಜೋರ್ಡನ್ ನದಿಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣ ಸಮುದ್ರ (ಮೃತ್ಯುಕಡಲು) ಎಣಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್ ಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ಕಣಿವೆ ಪ್ರದೇಶ ಇವುಗಳಿಂದ ಕೂಡಿತ್ತು.</verse>
				<verse number="4">ಅಷ್ಟರೋತ್ ಹಾಗೂ ಎದ್ರೈ ಎಂಬ ಊರುಗಳಲ್ಲಿ ವಾಸವಾಗಿದ್ದ ರೆಫಾಯರ ವಂಶಸ್ಥನೂ ಬಾಷಾನಿನ ಅರಸನೂ ಆದ ಓಗನು ವಧಿತರಾದವರಲ್ಲಿ ಎರಡನೆಯವನು.</verse>
				<verse number="5">ಇವನ ರಾಜ್ಯ, ಹೆರ್ಮೋನ್ ಮಲೆನಾಡು, ಸಲ್ಕಾನಗರ, ಗೆಷೂರ್ಯರ ಮತ್ತು ಮಾಕತೀಯರ ಮೇರೆಯವರೆಗಿದ್ದ ಬಾಷಾನ್ ನಾಡು, ಹೆಷ್ಬೋನಿನ ಅರಸನದ ಸೀಹೋನನ ಮೇರೆಯವರೆಗಿದ್ದ ಗಿಲ್ಯಾದಿನ ಅರ್ಧಪ್ರಾಂತ್ಯ ಇವುಗಳಿಂದ ಕೂಡಿತ್ತು.</verse>
				<verse number="6">ಸರ್ವೇಶ್ವರನ ದಾಸ ಮೋಶೆ ಇಸ್ರಯೇಲರ ಸಹಿತವಾಗಿ ಈ ಇಬ್ಬರನ್ನು ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ ಗಾದ್ಯರಿಗೂ ಮತ್ತು ಮನಸ್ಸೆಕುಲದ ಅರ್ಧಜನರಿಗೂ ಶಾಶ್ವತ ಸೊತ್ತಾಗಿ ಕೊಟ್ಟನು.</verse>
				<verse number="7">ಯೆಹೋಶುವನು ಇಸ್ರಯೇಲರ ಸಮೇತ, ಜೋರ್ಡನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಮಲೆನಾಡಿನ ಪ್ರದೇಶ,</verse>
				<verse number="8">ಇಳಿಜಾರಿನ ಪ್ರದೇಶ, ಕಣಿವೆ ಪ್ರದೇಶ, ತಪ್ಪಲು ಪ್ರದೇಶ, ಮರುಭೂಮಿ ಹಾಗೂ ದಕ್ಷಿಣಪ್ರಾಂತ್ಯ ಇವುಗಳನ್ನೂ ಇವುಗಳನ್ನು ಆಳುತ್ತಿದ್ದ ಹಿತ್ತೀಯ, ಅಮೋರಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ ಹಾಗೂ ಯೆಬೂಸಿಯ ಅರಸರನ್ನೂ ಸೋಲಿಸಿ ಅವರ ನಾಡುಗಳನ್ನು ಇಸ್ರಯೇಲ್ ಕುಲಭಾಗಗಳಿಗೆ ಶಾಶ್ವತ ಸೊತ್ತಾಗಿ ಕೊಟ್ಟನು. ಆ ಅರಸರ ಪಟ್ಟಿ ಹೀಗಿದೆ:</verse>
				<verse number="9">ಜೆರಿಕೋವಿನ ಅರಸ - 1 ಬೇತೇಲಿನ ಹತ್ತಿರವಿರುವ ಆಯಿ ಎಂಬ ಊರಿನ ಅರಸ - 1</verse>
				<verse number="10">ಜೆರೂಸಲೇಮಿನ ಅರಸ - 1 ಹೆಬ್ರೋನಿನ ಅರಸ - 1 ಯರ್ಮೂತಿನ ಅರಸ - 1</verse>
				<verse number="11">ಲಾಕೀಷಿನ ಅರಸ - 1 ಎಗ್ಲೋನಿನ ಅರಸ - 1</verse>
				<verse number="12">ಗೆಜೆರಿನ ಅರಸ - 1</verse>
				<verse number="13">ದೆಬೀರಿನ ಅರಸ - 1</verse>
				<verse number="14">ಗೆದೆರಿನ ಅರಸ - 1 ಹೊರ್ಮದ ಅರಸ - 1 ಅರಾದಿನ ಅರಸ - 1</verse>
				<verse number="15">ಲಿಬ್ನದ ಅರಸ - 1 ಅದುಲ್ಲಾಮದ ಅರಸ - 1</verse>
				<verse number="16">ಮಕ್ಕೇದದ ಅರಸ - 1 ಬೇತೇಲಿನ ಅರಸ - 1</verse>
				<verse number="17">ತಪ್ಪೂಹದ ಅರಸ - 1 ಹೇಫೆರಿನ ಅರಸ - 1</verse>
				<verse number="18">ಅಷ್ಟಾರೋನಿನ ಅರಸ - 1 ಅಫೇಕದ ಅರಸ - 1</verse>
				<verse number="19">ಮಾದೋನಿನ ಅರಸ - 1 ಹಾಚೋರಿನ ಅರಸ - 1 ಶಿಮ್ರೋನ್ಮೆರೋನಿನ ಅರಸ - 1</verse>
				<verse number="20">ಅಕ್ಷಾಫಿನ ಅರಸ - 1 ತಾನಕದ ಅರಸ - 1</verse>
				<verse number="21">ಮೆಗಿದ್ದೋವಿನ ಅರಸ - 1 ಕೆದೆಷಿನ ಅರಸ - 1</verse>
				<verse number="22">ಕರ್ಮೆಲ್ ಬೆಟ್ಟದ ಮೇಲಿರುವ ಯೊಕ್ನೆಯಾಮದ ಅರಸ - 1</verse>
				<verse number="23">ದೋರ್ ಬೆಟ್ಟದ ಮೇಲಿರುವ ದೋರಿನ ಅರಸ - 1 ಗಿಲ್ಗಾಲಿನವರ ಅರಸ - 1 ತಿರ್ಚದ ಅರಸ - 1</verse>
				<verse number="24">ಒಟ್ಟು ಅರಸರು 31 ಮಂದಿ.</verse>
			</chapter>
			<chapter number="13">
				<verse number="1">ಯೆಹೋಶುವ ಹಣ್ಣುಹಣ್ಣು ಮುದುಕನಾದ. ಆಗ ಸರ್ವೇಶ್ವರ ಆತನಿಗೆ, “ನೀನೀಗ ಮುದುಕ. ಸ್ವಾಧೀನ ಮಾಡಿಕೊಳ್ಳಬೇಕಾದ ನಾಡುಗಳು ಇನ್ನೂ ಬಹಳ ಇವೆ.</verse>
				<verse number="2">ಅವು ಯಾವುವೆಂದರೆ - ಈಜಿಪ್ಟಿನ ಈಚೆಯಿರುವ ಶೀಹೋರ್ ನದಿಯಿಂದ ಕಾನಾನ್ಯರಿಗೆ ಸೇರಿದ ಉತ್ತರ ಮೇರೆಯಾದ ಎಕ್ರೋನಿನವರೆಗಿರುವ ಗಾಜಾ, ಅಷ್ಡೋದ್, ಅಷ್ಕೆಲೋನ್, ಗತೂರ್, ಎಕ್ರೋನ್ ಎಂಬ ನಗರಗಳ ಐದು ಮಂದಿ ಫಿಲಿಷ್ಟಿಯ ಪ್ರಭುಗಳ ಸ್ವಾಧೀನದಲ್ಲಿದ್ದಂಥ ಫಿಲಿಷ್ಟಿಯ ಪ್ರಾಂತ್ಯ;</verse>
				<verse number="3"></verse>
				<verse number="4">ಗೆಷೂರ್ಯರ ನಾಡು, ದಕ್ಷಿಣದಲ್ಲಿದ್ದ ಅವ್ವೀಯರ ನಾಡು; ಸಿದೋನ್ಯರಿಗೆ ಸೇರಿದ ಮೆಯರಾದಿಂದ ಅಮೋರಿಯರ ಮೇರೆಯಾದ ಅಫೇಕದವರೆಗಿರುವ ಕಾನಾನ್ಯರ ನಾಡು;</verse>
				<verse number="5">ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ತಪ್ಪಲಿನಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ಹಾದಿಯವರೆಗಿರುವ ಲೆಬನೋನಿನ ಪೂರ್ವಪ್ರದೇಶ;</verse>
				<verse number="6">ಒಟ್ಟಾರೆ ಲೆಬನೋನಿನಿಂದ ಮಿಸ್ರೆಫೋತ್ಮಯಿಮಿನವರೆಗಿರುವ ಸಿದೋನ್ಯರ ಎಲ್ಲ ಪರ್ವತ ಪ್ರಾಂತ್ಯಗಳು.</verse>
				<verse number="7">“ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಯೇಲರ ಸಮ್ಮುಖದಿಂದ ಹೊರಡಿಸಿಬಿಡುವೆನು. ನೀನಾದರೋ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಯೇಲರಿಗೆ ನಾಡನ್ನು ಹಂಚಿಕೊಡುವಾಗ ಇವುಗಳನ್ನು ಕೂಡ ಸೇರಿಸಿ ನಾಡನ್ನೆಲ್ಲಾ ಒಂಬತ್ತು ಕುಲಗಳಿಗೂ ಮನಸ್ಸೆ ಕುಲದ ಅರ್ಧಜನರಿಗೂ ಪಾಲುಮಾಡಿಕೊಡು,” ಎಂದರು.</verse>
				<verse number="8">ಮನಸ್ಸೆಕುಲದ ಉಳಿದ ಅರ್ಧಜನರಿಗೆ, ರೂಬೇನ್ಯರಿಗೆ ಹಾಗೂ ಗಾದ್ಯರಿಗೆ ಜೋರ್ಡನಿನ ಆಚೆಕಡೆ ಈಗಾಗಲೇ ಮೋಶೆಯಿಂದ ಸ್ವಂತ ಭೂಮಿ ದೊರಕಿತ್ತು. ಸರ್ವೇಶ್ವರನ ದಾಸ ಮೋಶೆ ಅವರಿಗೆ ಕೊಟ್ಟ ಪ್ರಾಂತ್ಯಗಳು ಇವು:</verse>
				<verse number="9">ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ನಗರ ಮತ್ತು ಅದೇ ಕಣಿವೆಯಲ್ಲಿದ್ದ ಮತ್ತೊಂದು ನಗರ, ಇವುಗಳಿಂದ ದೀಬೋನಿನವರೆಗೆ ವಿಸ್ತರಿಸಿಕೊಂಡಿದ್ದ ಮೇದಬದ ತಪ್ಪಲ ನಾಡು;</verse>
				<verse number="10">ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯ ಅರಸ ಸೀಹೋನನಿಗೆ ಸೇರಿದ ಅಮ್ಮೋನಿಯರ ಎಲ್ಲೆಗೆ ಈಚೆಕಡೆ ಇದ್ದಂಥ ಎಲ್ಲ ನಗರಗಳು;</verse>
				<verse number="11">ಗಿಲ್ಯಾದ್ ನಾಡು, ಗೆಷ್ಯೂರ ಮತ್ತು ಮಾಕತೀಯರ ಪ್ರಾಂತ್ಯಗಳು, ಹೆರ್ಮೋನ್ ಬೆಟ್ಟದ ಮೇಲಿನ ಪ್ರದೇಶ</verse>
				<verse number="12">ಅಷ್ಟರೋತ್, ಎದ್ರೈ ಎಂಬ ಊರುಗಳಲ್ಲಿ ಆಳುತ್ತಿದ್ದ ರೆಫಾಯರ ವಂಶಸ್ಥನಾದ ಓಗನ ರಾಜ್ಯವಾಗಿದ್ದು ಸಲ್ಕಾ ನಗರದವರೆಗೆ ವಿಸ್ತರಿಸಿಕೊಂಡಿದ್ದ ಬಾಷಾನಿನ ಎಲ್ಲಾ ಪ್ರಾಂತ್ಯಗಳು. ಮೋಶೆಯೇ ಅವರನ್ನು ಜಯಿಸಿ ಅವರ ನಾಡುಗಳನ್ನು ಸ್ವಾಧೀನಮಾಡಿಕೊಂಡಿದ್ದನು.</verse>
				<verse number="13">ಇಸ್ರಯೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ನಾಡಿನೊಳಗಿಂದ ಅಟ್ಟಿಬಿಡಲಿಲ್ಲ. ಅವರು ಇಂದಿನವರೆಗೂ ಇಸ್ರಯೇಲರ ಮಧ್ಯದಲ್ಲೇ ಇದ್ದಾರೆ.</verse>
				<verse number="14">ಲೇವಿ ಕುಲದವರಿಗೆ ಮಾತ್ರ ಯಾವ ಪಾಲೂ ಸಿಕ್ಕಲಿಲ್ಲ. ಏಕೆಂದರೆ ಇಸ್ರಯೇಲಿನ ದೇವರಾದ ಸರ್ವೇಶ್ವರನು ಆಜ್ಞಾಪಿಸಿದಂತೆ ಯಜ್ಞಶೇಷವೇ ಅವರ ಸೊತ್ತಾಗಿತ್ತು.</verse>
				<verse number="15">ಮೋಶೆ ರೂಬೇನ್ಯರ ಗೋತ್ರಗಳಿಗೆ ಸ್ವಂತ ಆಸ್ತಿಯಾಗಿ ಕೊಟ್ಟ ಪ್ರದೇಶಗಳು ಇವು:</verse>
				<verse number="16">ಅರ್ನೋನ್ ಕಣಿವೆಯ ಅಂಚಿನಲ್ಲಿದ್ದ ಅರೋಯೇರ್ ನಗರ, ಅದೇ ಕಣಿವೆಯ ಮಧ್ಯೆಯಿದ್ದ ನಗರ;</verse>
				<verse number="17">ಮೇದೆಬದ ಬಯಲುನಾಡಿಗೆ ಸೇರಿದ ಹೆಷ್ಬೋನ್ ನಗರ, ಅಲ್ಲೆ ಎತ್ತರವಾದ ಬಯಲಿನಲ್ಲಿರುವ ದೀಬೋನ್, ಬಾಮೋತ್ ಬಾಳ್, ಬೇತ್ಬಾಳ್ಮೆಯೋನ್ ಯಹಚಾ,</verse>
				<verse number="18">ಕೆದೇಮೋತ್, ಮೆಫಾಯತ್,</verse>
				<verse number="19">ಕಿರ್ಯಾತಯಿಮ್, ಸಿಬ್ಮಾ ಎಂಬ ಹೆಷ್ಬೋನಿನ ಉಪಗ್ರಾಮಗಳು, ಕಣಿವೆಯಲ್ಲಿ ಇರುವ ಗುಡ್ಡದ ಮೇಲಿನ ಚೆರೆತ್ ಶಹರ್, ಬೇತ್ಪೆಗೋರ್ ಎಂಬ ನಗರಗಳು,</verse>
				<verse number="20">ಪಿಸ್ಗದ ಬುಡದಲ್ಲಿ ಇರುವ ಪ್ರದೇಶ, ಬೇತ್ ಯೆಷಿಮೋತ್ ನಗರ,</verse>
				<verse number="21">ಒಟ್ಟಾರೆ ಮೀಶೋರೆಂಬ ಎತ್ತರವಾದ ಬಯಲಿನಲ್ಲಿದ್ದ ಎಲ್ಲ ನಗರಗಳು, ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸ ಸೀಹೋನನ ಸಮಸ್ತ ರಾಜ್ಯ. ಮೋಶೆ ಈ ನಾಡಿನಲ್ಲಿ ವಾಸವಾಗಿದ್ದ ಸೀಹೋನನನ್ನೂ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ ಪ್ರಭುಗಳಾಗಿದ್ದ ಅವನ ಸರದಾರರನ್ನೂ ಸದೆಬಡಿದನು.</verse>
				<verse number="22">ಇಸ್ರಯೇಲರು ಕತ್ತಿಗೆ ತುತ್ತಾಗಿಸಿದವರಲ್ಲಿ ಬೆಯೋರನ ಮಗನೂ ಶಕುನ ನೋಡುವವನೂ ಆಗಿದ್ದ ಬಿಳಾಮನೂ ಸೇರಿದ್ದನು.</verse>
				<verse number="23">ಜೋರ್ಡನ್ ನದಿ ರೂಬೇನ್ ಗೋತ್ರಗಳಿಗೆ ಸ್ವಂತ ಆಸ್ತಿಯಾಗಿ ಸಿಕ್ಕಿದ ಗ್ರಾಮನಗರಗಳು ಇವೇ.</verse>
				<verse number="24">ಮೋಶೆ ಗಾದ್ ಕುಲದ ಗೋತ್ರಗಳಿಗೆ ಸ್ವಂತ ಆಸ್ತಿಯಾಗಿ ಕೊಟ್ಟ ಪ್ರದೇಶಗಳು ಇವು:</verse>
				<verse number="25">ಹೆಷ್ಬೋನಿನ ಅರಸ ಸೀಹೋನನ ರಾಜ್ಯದ ಉಳಿದ ಭಾಗವಾಗಿರುವ ಯಗ್ಜೇರ್, ಗಿಲ್ಯಾದಿನ ಎಲ್ಲ ನಗರಗಳು, ರಬ್ಬಾ ಊರಿನ ಪೂರ್ವದಲ್ಲಿ ಇರುವ ಅರೋಯೇರ್ ನಗರದವರೆಗೆ ವಿಸ್ತರಿಸಿಕೊಂಡಿರುವ ಅಮ್ಮೋನಿಯರ ಅರ್ಧರಾಜ್ಯ,</verse>
				<verse number="26">ಹೆಷ್ಬೋನಿನಿಂದ ರಾಮತ್ ಮಿಚ್ಫೆ, ಬೆಟೋನೀಮ್ ಎಂಬ ಊರುಗಳವರೆಗೆ ಇರುವ ಪ್ರದೇಶ, ಮಹನಯಿಮಿನಿಂದ ದೇಬೀರ್ ಪ್ರಾಂತ್ಯದವರೆಗೆ ಇರುವ ನಾಡು,</verse>
				<verse number="27">ಜೋರ್ಡನ್ ಕಣಿವೆಯಲ್ಲಿರುವ ಬೇತ್ ಹಾರಾಮ್, ಬೇತ್ ನಿಮ್ರಾ, ಸುಕ್ಕೋತ್, ಚಾಫೋನ್ ಎಂಬ ನಗರಗಳು, ಕಿನ್ನೆರೆತ್ ಸರೋವರ, (ದಕ್ಷಿಣ ದಿಕ್ಕಿನ) ಮೂಲೆಯವರೆಗೆ ವಿಸ್ತರಿಸಿಕೊಂಡಿರುವ ಜೋರ್ಡನ್ ಪೂರ್ವಪ್ರದೇಶ.</verse>
				<verse number="28">ಈ ಎಲ್ಲ ಗ್ರಾಮನಗರಗಳು ಗಾದ್ ಕುಲದ ಆಸ್ತಿಪಾಸ್ತಿ ಆದವು.</verse>
				<verse number="29">ಮಹನಯಿಮಿನ (ಉತ್ತರದಲ್ಲಿದ್ದ) ಹಾಗೂ ಮೊದಲು ಬಾಷಾನಿನ ಅರಸ ಓಗನ ರಾಜ್ಯವಾಗಿದ್ದ ಬಾಷಾನ್ ನಾಡನ್ನು</verse>
				<verse number="30">ಮನಸ್ಸೆ ಕುಲದ ಅರ್ಧಕುಲಗಳಿಗೆ ಮೋಶೆ ಕೊಟ್ಟನು, ಯಾಯಿರನ ಗ್ರಾಮಗಳೆನಿಸಿಕೊಳ್ಳುವ ಅರವತ್ತು ಊರುಗಳು ಇದರಲ್ಲೆ ಇವೆ.</verse>
				<verse number="31">ಗಿಲ್ಯಾದಿನ ಅರ್ಧಭಾಗ ಓಗನ ರಾಜಧಾನಿಗಳಾಗಿದ್ದ ಬಾಷಾನಿನ ಅಷ್ಟರೋತ್ ಹಾಗೂ ಎದ್ರೈ ಎಂಬ ನಗರಗಳು ಮನಸ್ಸೆಯ ಮಗ ಮಾಕೀರನ ಗೋತ್ರದ ಅರ್ಧಜನರಿಗೆ ಸಿಕ್ಕಿದವು.</verse>
				<verse number="32">ಮೋಶೆ ಜೋರ್ಡನಿನ ಆಚೆ ಜೆರಿಕೋವಿನ ಎದುರಿನಲ್ಲಿರುವ ಮೋವಾಬ್ಯರ ಬಯಲು ಪ್ರದೇಶದಲ್ಲಿದ್ದಾಗ ಇವುಗಳನ್ನು ಅವರಿಗೆ ಸ್ವಂತ ಆಸ್ತಿಯಾಗಿ ಕೊಟ್ಟನು.</verse>
				<verse number="33">ಆದರೆ ಲೇವಿಯ ಕುಲಕ್ಕೆ ಮೋಶೆ ಯಾವ ಸೊತ್ತನ್ನೂ ಕೊಡಲಿಲ್ಲ. ಏಕೆಂದರೆ ಇಸ್ರಯೇಲಿನ ದೇವರಾದ ಸರ್ವೇಶ್ವರನೇ ಅವರ ಸೊತ್ತೆಂದು ವಾಗ್ದಾನ ಮಾಡಲಾಗಿತ್ತು.</verse>
			</chapter>
			<chapter number="14">
				<verse number="1">ಯಾಜಕ ಎಲ್ಲಾಜಾರನು, ನೂನನ ಮಗ ಯೆಹೋಶುವನು ಹಾಗೂ ಇಸ್ರಯೇಲ್ ಕುಲಾಧಿಪತಿಗಳು</verse>
				<verse number="2">ಸರ್ವೇಶ್ವರಸ್ವಾಮಿ ಮೋಶೆಯ ಮೂಲಕ ಆಜ್ಞಾಪಿಸಿದಂತೆ ಜೋರ್ಡನಿನ ಪಶ್ಚಿಮದ ಕಾನಾನ್ ನಾಡನ್ನು ಚೀಟುಹಾಕಿ ಇಸ್ರಯೇಲರ ಒಂಬತ್ತುವರೆ ಕುಲದವರಿಗೆ ಸ್ವಂತ ಆಸ್ತಿಯಾಗಿ ಹಂಚಿಕೊಟ್ಟರು.</verse>
				<verse number="3">ಉಳಿದ ಎರಡುವರೆ ಕುಲಗಳ ಜನರಿಗೆ ಜೋರ್ಡನಿನ ಆಚೆಯಲ್ಲಿ ಮೋಶೆಯೇ ಸೊತ್ತನ್ನು ಕೊಟ್ಟಿದ್ದನು. ಲೇವಿಯರಿಗೆ ಮಾತ್ರ ಕೊಡಲಿಲ್ಲ.</verse>
				<verse number="4">ಜೋಸೆಫ್ಯರರು ಮನಸ್ಸೆ ಮತ್ತು ಎಫ್ರಯಿಮ್ ಎಂಬ ಎರಡು ಕುಲಗಳಾಗಿ ಎಣಿಸಲ್ಪಟ್ಟಿದ್ದರು. ಲೇವಿಯರಿಗೆ, ತಂಗುವುದಕ್ಕೆ ಕೆಲವು ನಗರಗಳು ಹಾಗು ಅವರ ದನಕುರಿಗಳಿಗೆ ಅಲ್ಲಿನ ಕೆಲವು ಹುಲ್ಲುಗಾವಲುಗಳನ್ನು ಬಿಟ್ಟರೆ ಬೇರೇನೂ ಸಿಕ್ಕಲಿಲ್ಲ.</verse>
				<verse number="5">ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ನಾಡನ್ನು ಹಂಚಿಕೊಂಡರು.</verse>
				<verse number="6">ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ, “ಸರ್ವೇಶ್ವರ ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಭಕ್ತನಾದ ಮೋಶೆಗೆ ಹೇಳಿದ್ದು ನಿಮಗೆ ಚೆನ್ನಾಗಿ ಗೊತ್ತಿದೆ.</verse>
				<verse number="7">ಸರ್ವೇಶ್ವರನ ದಾಸನಾದ ಮೋಶೆ ಈ ನಾಡನ್ನು ಸಂಚರಿಸಿ ನೋಡುವುದಕ್ಕೆ ಕಾದೇಶ್ ಬರ್ನೇಯದಿಂದ ನನ್ನನ್ನು ಕಳಿಸಿದಾಗ ನನಗೆ ನಾಲ್ವತ್ತು ವರುಷ.</verse>
				<verse number="8">ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗೆಡಿಸಿದರು. ನಾನಾದರೋ ನನ್ನ ದೇವರಾದ ಸರ್ವೇಶ್ವರನನ್ನೇ ಸಂಪೂರ್ಣವಾಗಿ ನಂಬಿ ಶ್ರದ್ಧೆಯಿಂದ ಅನುಸರಿಸಿದೆ.</verse>
				<verse number="9">ಮೋಶೆ ಅಂದು ನನಗೆ, ‘ನೀನು ಪೂರ್ಣ ಮನಸ್ಸಿನಿಂದ ನನ್ನ ದೇವರಾದ ಸರ್ವೇಶ್ವರನನ್ನೇ ಶ್ರದ್ಧೆಯಿಂದ ಅನುಸರಿಸಿದ ಕಾರಣ ನೀನು ಸಂಚರಿಸಿದ ಪ್ರದೇಶ ನಿನಗೂ ನಿನ್ನ ಸಂತಾನದವರಿಗೂ ಶಾಶ್ವತ ಸೊತ್ತಾಗುವುದು,’ ಎಂದು ಪ್ರಮಾಣಮಾಡಿ ಹೇಳಿದನು.</verse>
				<verse number="10">ಸರ್ವೇಶ್ವರ ಈ ಮಾತುಗಳನ್ನು ಮೋಶೆಗೆ ಹೇಳಿದಂದಿನಿಂದ ಇಸ್ರಯೇಲರು ಅರಣ್ಯದಲ್ಲಿ ಅಲೆಯುತ್ತಿದ್ದ ವರ್ಷಗಳೂ ಸೇರಿ ನಾಲ್ವತ್ತೈದು ವರ್ಷಗಳು ದಾಟಿದವು. ಸರ್ವೇಶ್ವರ ತಾವು ನುಡಿದಂತೆಯೇ ಈ ಕಾಲವೆಲ್ಲ ನನ್ನನ್ನು ಜೀವದಿಂದುಳಿಸಿದ್ದಾರೆ. ಈಗ ನನಗೆ ಎಂಬತ್ತೈದು ವರ್ಷ.</verse>
				<verse number="11">ಮೋಶೆ ನನ್ನನ್ನು ಕಳಿಸಿದಾಗ ನನಗೆಷ್ಟು ಬಲವಿತ್ತೋ ಈಗಲೂ ಅಷ್ಟೇ ಬಲವಿದೆ. ಯುದ್ಧಮಾಡುವುದಕ್ಕೂ ವಿಶೇಷ ಕಾರ್ಯಗಳನ್ನು ನಿರ್ವಹಿಸುವುದಕ್ಕೂ ನನಗೆ ಮುಂಚಿನಂತೆಯೇ ಶಕ್ತಿಯಿದೆ.</verse>
				<verse number="12">ಹೀಗಿರಲು ಸರ್ವೇಶ್ವರ ಆ ದಿನದಂದು ಸೂಚಿಸಿದಂತೆ ಈ ಮಲೆನಾಡನ್ನು ನನಗೆ ಕೊಡು. ‘ಇದರಲ್ಲಿ ಎತ್ತರದ ವ್ಯಕ್ತಿಗಳಿದ್ದಾರೆ, ದೊಡ್ಡ ದೊಡ್ಡ ನಗರಗಳಿವೆ, ಕೋಟೆಕೊತ್ತಲಗಳಿವೆ’ ಎಂದು ಆ ಕಾಲದಲ್ಲಿ ನೀನು ಕೇಳಿದ್ದುಂಟು. ಅವರೆಲ್ಲರನ್ನು ಓಡಿಸಿಬಿಡಲು ಸರ್ವೇಶ್ವರ ತಮ್ಮ ಮಾತಿಗನುಸಾರ ನನಗೆ ಸಹಾಯಮಾಡುವರೆಂಬ ನಂಬಿಕೆ ನನಗಿದೆ,” ಎಂದನು.</verse>
				<verse number="13">ಆಗ ಯೆಹೋಶುವನು ಯೆಫುನ್ನೆಯ ಮಗನಾದ ಕಾಲೇಬನನ್ನು ಆಶೀರ್ವದಿಸಿ, ಹೆಬ್ರೋನ್ ನಗರವನ್ನು ಅವನಿಗೆ ಸೊತ್ತಾಗಿ ಕೊಟ್ಟನು.</verse>
				<verse number="14">ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಇಸ್ರಯೇಲಿನ ದೇವರಾದ ಸರ್ವೇಶ್ವರನನ್ನು ಸಂಪೂರ್ಣವಾಗಿ ಶ್ರದ್ಧೆಯಿಂದ ಅನುಸರಿಸಿದ್ದರಿಂದ ಹೆಬ್ರೋನ್ ಅವನಿಗೆ ಸೊತ್ತಾಗಿ ಸಿಕ್ಕಿತು.ಅದು ಇಂದಿನವರೆಗೂ ಅವನದೇ ಆಗಿದೆ.</verse>
				<verse number="15">ಅದರ ಹಿಂದಿನ ಹೆಸರು, ‘ಕಿರ್ಯತ್ ಅರ್ಬ’ ಎಂದು. ಅರ್ಬ ಎಂಬವನು ಈ ಎತ್ತರದ ವ್ಯಕ್ತಿಗಳಲ್ಲಿ ಪ್ರಮುಖನು. ಯುದ್ಧವು ನಿಂತಿತು. ನಾಡಿನಲ್ಲಿ ಶಾಂತಿಸಮಾಧಾನ ನೆಲೆಸಿತು.</verse>
			</chapter>
			<chapter number="15">
				<verse number="1">ಎದೋಮ್ ನಾಡು ಹಾಗೂ ಚಿನ್ ಮರುಭೂಮಿಯ ಎಲ್ಲೆಯಾಗಿರುವ ಕಾನಾನ್ ನಾಡಿನ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ದೊರಕಿದ ಸೊತ್ತು.</verse>
				<verse number="2">ಅದರ ದಕ್ಷಿಣದ ಎಲ್ಲೆ, ಲವಣ ಸಮುದ್ರದ ತೆಂಕಣ ತುದಿಯಿಂದ ತೊಡಗಿ</verse>
				<verse number="3">ಅಕ್ರಬ್ಬೀಮ್ ಎಂಬ ಕೊಲ್ಲಿಯ ದಕ್ಷಿಣ ಮಾರ್ಗವಾಗಿ ಚಿನ್ ಗೆ ಹೋಗುತ್ತದೆ.</verse>
				<verse number="4">ಅಲ್ಲಿಂದ ಕಾದೇಶ್ ಬರ್ನೇಯದ ದಕ್ಷಿಣ ಮಾರ್ಗವಾಗಿ ಹೆಚ್ರೋನಿಗೂ ಅಲ್ಲಿಂದ ಏರುತ್ತಾ ಅದ್ದಾರಿಗೂ ಹೋಗಿ ಕರ್ಕದ ಕಡೆಗೆ ತಿರುಗಿಕೊಳ್ಳುತ್ತದೆ. ಅಚ್ಮೋನಿನ ಮೇಲೆ ಈಜಿಪ್ಟಿನ ನದಿಗೆ ಬಂದು ಸಮುದ್ರತೀರದಲ್ಲಿ ಮುಕ್ತಾಯಗೊಳ್ಳುತ್ತದೆ. ಇದು ಅದರ ತೆಂಕಣ ಎಲ್ಲೆ.</verse>
				<verse number="5">ಜೋರ್ಡನ್ ನದಿಯ ಮುಖದಿಂದ ಲವಣಸಮುದ್ರವೆಲ್ಲ ಅದರ ಪೂರ್ವದಿಕ್ಕಿನ ಎಲ್ಲೆ ಆಗಿದೆ.</verse>
				<verse number="6">ಅದರ ಉತ್ತರ ದಿಕ್ಕಿನ ಎಲ್ಲೆ ಜೋರ್ಡನ್ ನದಿಯು ಲವಣಸಮುದ್ರವನ್ನು ಕೂಡುವ ಸ್ಥಳದಿಂದ ತೊಡಗಿ ಬೇತ್ ಹೊಗ್ಲಾ, ಬೇತ್ ಅರಾಬದ ಉತ್ತರ ಪ್ರಾಂತ್ಯ, ರೂಬೇನನ ಮಗ ಬೋಹನನ ಬಂಡೆ, ಆಕೋರಿನ ಕಣಿವೆ</verse>
				<verse number="7">ಇವುಗಳ ಮೇಲೆ ದೆಬೀರಿಗೆ ಹೋಗುತ್ತದೆ. ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ನದಿಯ ದಕ್ಷಿಣದಲ್ಲಿರುವ ಅದುಮೀಮಿಗೆ ಹೋಗುವ ದಾರಿಯ ಎದುರಿನಲ್ಲಿರುವ ಗಿಲ್ಗಾಲ್, ಏನ್ ಷೆಮೆಷ್ ಎನ್ನುವ ಬುಗ್ಗೆ, ಏನ್ ರೋಗೆಲ್ ಇವುಗಳ ಮೇಲೆ</verse>
				<verse number="8">ಬೆನ್ ಹಿನ್ನೋಮನ ಕಣಿವೆಗೆ ಹೊಗುತ್ತದೆ. ಅಲ್ಲಿಂದ ಅದು ಜೆರುಸಲೇಮ್ ನಗರವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣ ಮಾರ್ಗವಾಗಿ ಹಿನ್ನೋಮ್ ಕಣಿವೆಯ ಪಶ್ಚಿಮದಲ್ಲೂ ರೆಫಾಯೀಮ್ ಕಣಿವೆಯ ಉತ್ತರದಲ್ಲೂ ಇರುವ ಬೆಟ್ಟದ ತುದಿಗೆ ಹೋಗುತ್ತದೆ.</verse>
				<verse number="9">ಅದು ಆ ಬೆಟ್ಟದ ತುದಿಯಿಂದ ಮುಂದೆ ನೆಪ್ತೋಹ ಬುಗ್ಗೆ, ಎಫ್ರೋನ್ ಬೆಟ್ಟದ ನಗರಗಳು ಇವುಗಳ ಮೇಲೆ ಕಿರ್ಯತ್ಯಾರೀಮ್ ಎನಿಸಿಕೊಳ್ಳುವ ಬಾಲಾ ಎಂಬ ಊರಿಗೆ ಹೋಗುತ್ತದೆ.</verse>
				<verse number="10">ಅಲ್ಲಿಂದ ಪಶ್ಚಿಮದಲ್ಲಿ ಇರುವ ಸೇಯಿರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಎನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರಮಾರ್ಗವಾಗಿ ಇಳಿಯುತ್ತಾ ಬೇತ್ ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು</verse>
				<verse number="11">ಅಲ್ಲಿಂದ ಉತ್ತರ ದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾಗುಡ್ಡದ ಮೇಲೆ ಯೆಬ್ನೇಲಿಗೆ ಹೋಗಿ ಸಮುದ್ರ ತೀರದಲ್ಲಿ ಮುಗಿಯುತ್ತದೆ.</verse>
				<verse number="12">ಮಹಾಸಾಗರದ ತೀರವೇ ಪಶ್ಚಿಮ ಎಲ್ಲೆ, ಯೆಹೂದ ಗೋತ್ರಗಳ ನಾಡಿನ ಸುತ್ತಣ ಎಲ್ಲೆಗಳು ಇವೇ.</verse>
				<verse number="13">ಯೆಹೋಶುವನು ಸರ್ವೇಶ್ವರನ ಅಪ್ಪಣೆಯಂತೆ ಯೆಫುನ್ನೆಯ ಮಗ ಕಾಲೇಬನಿಗೆ ಯೆಹೂದ ಕುಲದವರ ನಡುವೆ ಅನಾಕನ ತಂದೆ ಆದ ಅರ್ಬನ ನಗರವಾಗಿದ್ದ ಹೆಬ್ರೋನನ್ನು ಕೊಟ್ಟನು.</verse>
				<verse number="14">ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.</verse>
				<verse number="15">ಅನಂತರ ಅವನು ಹೊರಟು ಕಿರ್ಯತ್ ಸೇಫೆರ್ ಎನ್ನಿಸಿಕೊಳ್ಳುತ್ತಿದ್ದ ದೆಬೀರಿನ ನಿವಾಸಿಗಳೊಡನೆ ಯುದ್ಧಮಾಡಿದನು.</verse>
				<verse number="16">ಅವನು, “ಕಿರ್ಯತ್ ಸೇಫೆರದ ಮೇಲೆ ದಾಳಿಮಾಡಿ ಹಿಡಿದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆಮಾಡಿಕೊಡುತ್ತೇನೆ,” ಎಂದನು.</verse>
				<verse number="17">ಕೆನಜನ ಮಗನೂ ಕಾಲೇಬನ ತಮ್ಮನೂ ಆದ ಒತ್ನಿಯೇಲನು ಅದರ ಮೇಲೆ ದಾಳಿಮಾಡಿ ತೆಗೆದುಕೊಂಡನು. ಅವನಿಗೆ ಕಾಲೇಬನು ತನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆ ಮಾಡಿಕೊಟ್ಟನು.</verse>
				<verse number="18">ಆಕೆ ಮನೆ ಸೇರಿದಾಗ ತನ್ನ ತಂದೆಯ ಬಳಿ ಭೂಮಿಯನ್ನು ಕೇಳಬೇಕೆಂದು ಒತ್ನಿಯೇಲನು ಅವಳನ್ನು ಪ್ರೋತ್ಸಾಹಿಸಿದನು. ಅಂತೆಯೇ ಅವಳು ಹೊರಟು ಹೇಸರಗತ್ತೆ ಮೇಲಿಂದ ಇಳಿದದ್ದೇ ಕಾಲೇಬನು, “ನಿನಗೇನು ಬೇಕು?” ಎಂದು ಕೇಳಿದನು.</verse>
				<verse number="19">ಅವಳು, “ನನಗೊಂದು ಕೊಡುಗೆ ಬೇಕು. ನನ್ನನ್ನು ಬೆಂಗಾಡಿಗೆ ಕೊಟ್ಟುಬಿಟ್ಟಿದ್ದೀರಲ್ಲವೆ? ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡಿ,” ಎಂದಳು. ಆಗ ಕಾಲೇಬನು ಅವಳಿಗೆ ಬುಗ್ಗೆಗಳಿದ್ದ ಮೇಲಣ ಹಾಗೂ ಕೆಳಗಣ ಸ್ಥಳಗಳನ್ನು ಕೊಟ್ಟನು.</verse>
				<verse number="20">ಯೆಹೂದ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತಿನ ವಿವರ:</verse>
				<verse number="21">ಎದೋಮ್ ಪ್ರಾಂತ್ಯವು ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಎದೆರ್, ಯಾಗೂರ್,</verse>
				<verse number="22">ಕೀನಾ, ದೀಮೋನಾ, ಅದಾದಾ, ಕೆದೆಷ್, ಹಾಚೋರ್, ಇತ್ನಾನ್,</verse>
				<verse number="23"></verse>
				<verse number="24">ಜೀಪ್, ಟೆಲೆಮ್, ಬೆಯಾಲೋತ್,</verse>
				<verse number="25">ಹಾಚೋರ್ ಹದತ್ತಾ, ಹಾಚೋರ್ ಎಂಬವ</verse>
				<verse number="26">ಕಿರ್ಯೋತ್, ಹೆಚ್ರೋನ್, ಅಮಾಮ್, ಶೆಮ,</verse>
				<verse number="27">ಮೋಲಾದ, ಹಚರ್ ಗದ್ದಾ, ಹೆಷ್ಮೋನ್, ಬೆತ್ಪೆಲೆಟ್, ಹಚರ್ ಷೂವಾಲ್,</verse>
				<verse number="28">ಬೇರ್ಷಬ, ಬಿಜ್ಯೋತ್ಯಾ,</verse>
				<verse number="29">ಬಾಲಾ, ಇಯ್ಯೀಮ್, ಎಚೆಮ್, ಎಲ್ಟೋಲದ್, ಕೆಸೀಲ್, ಹೊರ್ಮಾ,</verse>
				<verse number="30"></verse>
				<verse number="31">ಚಿಕ್ಲಗ್, ಮದ್ಮನ್ನಾ, ಸನ್ಸನ್ನಾ</verse>
				<verse number="32">ಲೆಬಾವೋತ್, ಶಿಲ್ಹೀಮ್, ಆಯಿನ್, ರಿಮ್ಮೋನ್ ಎಂಬ ಇಪ್ಪತ್ತೊಂಬತ್ತು ನಗರಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.</verse>
				<verse number="33">ಇಳಿಜಾರು ಪ್ರದೇಶದಲ್ಲಿ</verse>
				<verse number="34">ಎಷ್ಟಾವೋಲ್, ಚೊರ್ಗಾ, ಅಶ್ನಾ, ಜನೋಹ, ಎಂಗನ್ನೀಮ್,</verse>
				<verse number="35">ತಪ್ಪೂಹ, ಏನಾಮ್, ಯರ್ಮೂತ್,</verse>
				<verse number="36">ಅದುಲ್ಲಾಮ್, ಸೋಕೋ, ಅಜೇಕಾ, ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಹದಿನಾಲ್ಕು ನಗರಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.</verse>
				<verse number="37">ಚೆನಾನ್, ಹದಾಷಾ, ಮಿಗ್ದಲ್ಗಾದ್, ದಿಲಾನ್, ಮಿಚ್ಪೆ, ಯೊಕ್ತೇಲ್,</verse>
				<verse number="38"></verse>
				<verse number="39">ಲಾಕೀಷ್, ಬೊಚ್ಕತ್, ಎಗ್ಲೋನ್,</verse>
				<verse number="40">ಕಬ್ಬೋನ್, ಲಹ್ಮಾಮ್, ಕಿತ್ಲೀಷ್, ಗೆದೇರೋತ್, ಬೇತ್ ದಾಗೋನ್, ನಾಮಾ,</verse>
				<verse number="41">ಮಕ್ಕೇದಾ ಎಂಬ ಹದಿನಾರು ನಗರಗಳು, ಅವುಗಳ ಗ್ರಾಮಗಳು;</verse>
				<verse number="42">ಲಿಬ್ನಾ, ಎತೆರ್, ಅಷಾನ್, ಇಫ್ತಾಹ,</verse>
				<verse number="43"></verse>
				<verse number="44">ಆಶ್ನಾ, ನೆಚೀಬ್, ಕೆಯೀಲಾ, ಅಕ್ಜೀಬ್, ಮಾರೇಷಾ ಎಂಬ ಒಂಬತ್ತು ನಗರಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.</verse>
				<verse number="45">ಎಕ್ರೋನ್ ಸಂಸ್ಥಾನ ಮತ್ತು ಅದಕ್ಕೆ ಸೇರಿದ ಗ್ರಾಮ-ನಗರಗಳು;</verse>
				<verse number="46">ಎಕ್ರೋನಿನಿಂದ ಸಮುದ್ರದವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತ ಗ್ರಾಮಗಳು;</verse>
				<verse number="47">ಅಷ್ಡೋದ್ ಸಂಸ್ಥಾನ ಮತ್ತು ಅದರ ಗ್ರಾಮ-ನಗರಗಳು; ಗಾಜಾ ಸಂಸ್ಥಾನ ಹಾಗೂ ಈಜಿಪ್ಟಿನ ನದಿಯ ಹತ್ತಿರದಲ್ಲಿ ಮತ್ತು ಮಹಾಸಾಗರದ ತೀರದಲ್ಲಿ ಇರುವ ಅದರ ಎಲ್ಲ ಗ್ರಾಮ, ನಗರಗಳು.</verse>
				<verse number="48">ಮಲೆನಾಡಿನ ಪ್ರದೇಶದಲ್ಲಿರುವ ಶಾಮೀರ್, ಯತ್ತೀರ್, ಸೋಕೋ,</verse>
				<verse number="49">ದನ್ನಾ, ದೆಬೀರ್ ಎಂಬ ಕಿರ್ಯತ್ ಸನ್ನಾ, ಅನಾಬ್,</verse>
				<verse number="50"></verse>
				<verse number="51">ಎಷ್ಟೆಮೊ, ಅನೀಮ್, ಗೊಷೆನ್, ಹೋಲೋನ್, ಗಿಲೋ ಎಂಬ ಹನ್ನೊಂದು ನಗರಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು.</verse>
				<verse number="52">ಅರಬ್, ದೂಮಾ, ಎಷಾನ್,</verse>
				<verse number="53">ಯಾನೂಮ್, ಬೇತ್ ತಪ್ಪೂಹ, ಅಫೇಕಾ, ಹುಮ್ತಾ, ಹೆಬ್ರೋನ್ ಎಂಬ ಕಿರ್ಯತ್ ಅರ್ಬ, ಚಿಯೋರ್ ಎಂಬ ಒಂಬತ್ತು ನಗರಗಳು, ಅವುಗಳ ಗ್ರಾಮಗಳು.</verse>
				<verse number="54"></verse>
				<verse number="55">ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ,</verse>
				<verse number="56">ಇಜ್ರೇಲ್, ಯೊಗ್ದೆಯಾಮ್, ಜನೋಹ, ಕಯಿನ್, ಗಿಬೆಯಾ, ತಿಮ್ನಾ ಎಂಬ ಹತ್ತು ನಗರಗಳು ಮತ್ತು ಅವುಗಳ ಗ್ರಾಮಗಳು.</verse>
				<verse number="57"></verse>
				<verse number="58">ಹಲ್ಪೂಲ್, ಬೇತ್ ಚೂರ್, ಗೆದೋರ್,</verse>
				<verse number="59">ಮಾರಾತ್, ಬೇತನೋತ್ ಎಲ್ಟೆಕೋನ್ ಎಂಬ ಆರು ನಗರಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು</verse>
				<verse number="60">ಕಿರ್ಯಾತ್ಯಾರಿಮ್ ಅನ್ನಿಸಿಕೊಳ್ಳುವ ಕಿರ್ಯತ್ ಬಾಳ್, ರಬ್ಬಾ ಎಂಬ ಎರಡು ನಗರಗಳು ಮತ್ತು ಅವುಗಳ ಗ್ರಾಮಗಳು.</verse>
				<verse number="61">ಮರುಭೂಮಿಯಲ್ಲಿರುವ ಬೇತ್ ಅರಾಬಾ,</verse>
				<verse number="62">ಮಿದ್ದೀನ್, ಸೆಕಾಕಾ, ನಿಬಾನ್ ಉಪ್ಪಿನಪಟ್ಟಣ, ಏಂಗೇದಿ ಎಂಬ ಆರು ನಗರಗಳು ಮತ್ತು ಅವುಗಳ ಗ್ರಾಮಗಳು.</verse>
				<verse number="63">ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಜೆರುಸಲೇಮಿನಲ್ಲೇ ವಾಸವಾಗಿದ್ದಾರೆ.</verse>
			</chapter>
			<chapter number="16">
				<verse number="1">ಜೋಸೆಫನ ವಂಶದವರಿಗೆ ದೊರಕಿದ ಆಸ್ತಿಪಾಸ್ತಿಯ ಎಲ್ಲೆಯು ಜೆರಿಕೋವಿನ ಬಳಿಯಲ್ಲಿ ಜೋರ್ಡನ್ ತೀರದಿಂದ ತೊಡಗಿ ಜೆರಿಕೋವಿನ ಪೂರ್ವದಲ್ಲಿದ್ದ ನದಿ, ಜೆರಿಕೋವಿಗೂ ಬೇತೇಲಿಗೂ ನಡುವೆ ಇರುವ ಮಲೆನಾಡಿನ ಮರುಭೂಮಿ ಹಾಗೂ ಬೇತೇಲ್ ಇವುಗಳ ಮೇಲೆ ಲೂಜಿಗೆ ಹೋಗುತ್ತದೆ.</verse>
				<verse number="2">ಅಲ್ಲಿಂದ ಅರ್ಕೀಯರ ಎಲ್ಲೆಯನ್ನು ಅನುಸರಿಸಿ ಅಟಾರೋತಿಗೆ ಹೋಗುತ್ತದೆ.</verse>
				<verse number="3">ಅಲ್ಲಿಂದ ಇಳಿದು ದಶ್ಚಿಮ ದಿಕ್ಕಿನಲ್ಲಿರುವ ಯಫ್ಲೇಟ್ಯರ ಪ್ರಾಂತ್ಯವನ್ನು ಮುಟ್ಟಿ ಕೆಳಗಿನ ಬೇತ್ ಹೋರೋನಿನ ಮೇಲೆ ಗೆಜೆರಿಗೆ ಹೋಗಿ ಸಮುದ್ರ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.</verse>
				<verse number="4">ಇದು ಜೋಸೆಫನ ಮಕ್ಕಳಾದ ಮನಸ್ಸೆ-ಎಫ್ರಯಿಮ್ ಎಂಬ ಕುಲಗಳಿಗೆ ದೊರೆತ ಸೊತ್ತಿನ ಎಲ್ಲೆ.</verse>
				<verse number="5">ಎಫ್ರಯಿಮ್ ಗೋತ್ರಗಳ ನಾಡಿನ ದಕ್ಷಿಣ ದಿಕ್ಕಿನ ಎಲ್ಲೆ ಆಟಾರೋತದ್ದಾರಿನ ಪೂರ್ವ ದಿಕ್ಕಿನಿಂದ ತೊಡಗಿ ಮೇಲಿನ ಬೇತ್ ಹೋರೋನಿನ ಮೇಲೆ ಸಮುದ್ರ ತೀರಕ್ಕೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ. ಅದರ ಉತ್ತರ ದಿಕ್ಕಿನ ಎಲ್ಲೆ ಮಿಕ್ಮೆತಾತ್ ಎಂಬಲ್ಲಿ ತೊಡಗಿ ಪೂರ್ವಕ್ಕೆ ತಿರುಗಿಕೊಂಡು ತಾನತ್ ಶೀಲೋ ಎಂಬಲ್ಲಿಗೆ ಹೋಗುತ್ತದೆ.</verse>
				<verse number="6">ಅಲ್ಲಿಂದ ಯಾನೋಹ ಊರಿನ ಪೂರ್ವಮಾರ್ಗವಾಗಿ ಅಟಾರೋತ್, ನಾರಾ ಎಂಬ ಊರುಗಳ ಮೇಲೆ ಇಳಿಯುತ್ತಾ ಜೆರಿಕೋ ಪ್ರಾಂತ್ಯಕ್ಕೆ ಸೋಂಕಿ ಜೋರ್ಡನ್ ನದಿಯ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ.</verse>
				<verse number="7"></verse>
				<verse number="8">ಅದರ ಎಲ್ಲೆ ತಪ್ಪೊಹದಿಂದ ಪಶ್ಚಿಮ ಕಡೆಗೆ ಹೋಗುವ ಕಾನಾ ನದಿಯನ್ನು ಅನುಸರಿಸಿ ಸಮುದ್ರ ತೀರದಲ್ಲಿ ಮುಕ್ತಾಯಗೊಳ್ಳುತ್ತದೆ. ಎಫ್ರಯಿಮ್ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತು ಇದೇ.</verse>
				<verse number="9">ಇದಲ್ಲದೆ, ಎಫ್ರಯಿಮ್ ಕುಲದವರಿಗೆ ಮನಸ್ಸೆ ಕುಲದವರ ಮಧ್ಯೆ ಪ್ರತ್ಯೇಕವಾದ ಕೆಲವು ನಗರಗಳೂ ಅವಕ್ಕೆ ಸೇರಿದ ಗ್ರಾಮಗಳೂ ದೊರಕಿದವು.</verse>
				<verse number="10">ಅವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸದೆ ಹೋದುದರಿಂದ ಅವರು ಇಂದಿಗೂ ಎಫ್ರಯಿಮ್ಯರ ನಡುವೆ ಊಳಿಗದವರಾಗಿದ್ದುಕೊಂಡು ಅವರಿಗೆ ಸೇವೆಮಾಡುತ್ತಾರೆ.</verse>
			</chapter>
			<chapter number="17">
				<verse number="1">ಜೋಸೆಫನ ಚೊಚ್ಚಲ ಮಗ ಮನಸ್ಸೆಯ ವಂಶದವರಿಗೆ ದೊರಕಿದ ಸೊತ್ತಿನ ವಿವರ ಇದು: ಮನಸ್ಸೆಯ ಹಿರಿಯ ಮಗನೂ ಗಿಲ್ಯಾದನ ತಂದೆಯೂ ಆದ ಮಾಕೀರನು ಯುದ್ಧವೀರನು. ಆದ್ದರಿಂದ ಅವನಿಗೆ ಗಿಲ್ಯಾದ, ಬಾಷಾನ ಎಂಬ ಪ್ರಾಂತ್ಯಗಳು ಸಿಕ್ಕಿದವು.</verse>
				<verse number="2">ಜೋಸೆಫನ ಮಗ ಮನಸ್ಸೆಯ ಉಳಿದ ಗಂಡು ಮಕ್ಕಳಾದ ಅಬೀಯೆಜೆರ್, ಹೇಲೆಕ್, ಅಸ್ರೀಯೇಲ್, ಶೆಕೆಮ್, ಹೇಫೆರ್, ಶಮೀದಾ, ಎಂಬವರ ವಂಶದವರಿಗೆ ಜೋರ್ಡನಿನ ಈಚೆಕಡೆ ಪಾಲು ಸಿಕ್ಕಿತು.</verse>
				<verse number="3">ಮನಸ್ಸೆಗೆ ಹುಟ್ಟಿದ ಮಾಕೀರನ ಮರಿಮಗನೂ ಗಿಲ್ಯಾದನ ಮೊಮ್ಮಗನೂ ಹೇಫೆರನ ಮಗನೂ ಆದ ಚಲ್ಪಹಾದನಿಗೆ ಹೆಣ್ಣು ಮಕ್ಕಳು ಹುಟ್ಟಿದರೇ ಹೊರತು ಗಂಡು ಮಕ್ಕಳು ಆಗಲಿಲ್ಲ. ಮಹ್ಲಾ, ನೋವಾ, ಹೊಗ್ಲಾ, ಮಿಲ್ಕಾ, ತಿರ್ಚಾ ಎಂಬವರು ಅವನ ಹೆಣ್ಣುಮಕ್ಕಳು.</verse>
				<verse number="4">ಇವರು ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗ ಯೆಹೋಶುವ ಹಾಗೂ ಕುಲಾಧಿಪತಿಗಳ ಬಳಿಗೆ ಬಂದು, “ನಮ್ಮ ಅಣ್ಣತಮ್ಮಂದಿರೊಡನೆ ನಮಗೂ ಪಾಲುಕೊಡಬೇಕೆಂದು ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದ್ದಾರಲ್ಲವೆ?” ಎಂದು ಹೇಳಿದರು. ಯೆಹೋಶುವನು ಸರ್ವೇಶ್ವರನ ಅಪ್ಪಣೆಯಂತೆ ಅವರಿಗೆ ಅವರ ತಂದೆಯ ಅಣ್ಣತಮ್ಮಂದಿರ ಜೊತೆಗೆ ಸೊತ್ತನ್ನು ಪಾಲಾಗಿಕೊಟ್ಟನು.</verse>
				<verse number="5">ಮನಸ್ಸೆ ಕುಲದ ಹೆಣ್ಣುಮಕ್ಕಳಿಗೆ ಗಂಡುಮಕ್ಕಳ ಸಮೇತ ಸೊತ್ತು ದೊರಕಿದ್ದರಿಂದ ಮನಸ್ಸೆಯವರಿಗೆ ಜೋರ್ಡನಿನ ಆಚೆಯಿದ್ದ ಬಾಷಾನ್ ಮತ್ತು ಗಿಲ್ಯಾದ್ ಪ್ರಾಂತ್ಯಗಳ ಜೊತೆಗೆ ಈಚೆಯಲ್ಲೂ ಹತ್ತುಪಾಲು ಸಿಕ್ಕಿದವು.</verse>
				<verse number="6">ಗಿಲ್ಯಾದ್ ನಾಡು ಮನಸ್ಸೆಯ ಉಳಿದ ಗೋತ್ರಗಳಿಗೆ ಸಿಕ್ಕಿತು.</verse>
				<verse number="7">ಮನಸ್ಸೆಯವರ ಸೊತ್ತಿನ ಎಲ್ಲೆ ಆಶೇರ್ ಊರಿನಿಂದ ತೊಡಗಿ ಶೆಕೆಮಿನ ಪೂರ್ವದಲ್ಲಿ ಇರುವ ಮಿಕ್ಮೆತಾತಿನ ಮೇಲೆ ದಕ್ಷಿಣದಲ್ಲಿರುವ ತಪ್ಪೂಹದ ಬುಗ್ಗೆಗೆ ಹೋಗುತ್ತದೆ.</verse>
				<verse number="8">ತಪ್ಪೂಹ ನಗರಕ್ಕೆ ಸೇರುವ ಭೂಮಿ ಮನಸ್ಸೆಯವರದು;ಆದರೆ ಅವರ ಸರಹದ್ದಿನಲ್ಲಿರುವ ತಪ್ಪೂಹ ನಗರ ಎಫ್ರಯಿಮ್ಯರದು.</verse>
				<verse number="9">ಅಲ್ಲಿಂದ ಅವರ ಎಲ್ಲೆ ಇಳಿಯುತ್ತಾ ಕಾನಾ ಹಳ್ಳದ ದಕ್ಷಿಣಕ್ಕೆ ಹೋಗುತ್ತದೆ. ಅಲ್ಲಿ ಮನಸ್ಸೆಯವರಿಗೆ ಇರುವಂತೆ ಎಫ್ರಯಿಮ್ಯರಿಗೂ ಕೆಲವು ಪಟ್ಟಣಗಳಿವೆ. ಮನಸ್ಸೆಯವರ ಮುಂದಿನ ಎಲ್ಲೆಯು ಹಳ್ಳದ ಉತ್ತರ ತೀರವನ್ನು ಅನುಸರಿಸಿ ಹೋಗಿ ಸಮುದ್ರದ ದಡದಲ್ಲಿ ಮುಕ್ತಾಯಗೊಳ್ಳುತ್ತದೆ.</verse>
				<verse number="10">ಆ ಹಳ್ಳದ ದಕ್ಷಿಣ ತೀರ ಎಫ್ರಯಿಮ್ಯರದು; ಉತ್ತರ ತೀರ ಮನಸ್ಸೆಯವರದು. ಸಮುದ್ರವೇ ಇವರ ಪಶ್ಚಿಮದ ಎಲ್ಲೆ. ಉತ್ತರಕ್ಕೆ ಆಶೇರ ಕುಲದವರ ಪ್ರಾಂತ್ಯವೂ ಪೂರ್ವಕ್ಕೆ ಇಸ್ಸಾಕಾರ್ ಕುಲದವರ ನಾಡೂ ಇರುತ್ತವೆ.</verse>
				<verse number="11">ಇದಲ್ಲದೆ ಮನಸ್ಸೆಯವರಿಗೆ ಇಸ್ಸಾಕಾರ್, ಆಶೇರ್ ಎಂಬವರ ಪ್ರಾಂತ್ಯಗಳಲ್ಲಿ ಬೇತ್ ಷೆಯಾನ್, ಇಬ್ಲೆಯಾಮ್, ದೋರ್ ಎಂಬ ನಗರಗಳೂ ಅವುಗಳ ಗ್ರಾಮಗಳೂ ದುರ್ಗತ್ರಯವಾದ ಎಂದೋರ್, ತಾನಕ್, ಮೆಗಿದ್ದೋ ಎಂಬ ನಗರಗಳೂ ಅವುಗಳಿಗೆ ಸೇರಿದ ಊರುಗಳೂ ಸಿಕ್ಕಿದವು.</verse>
				<verse number="12">ಆದರೆ ಮನಸ್ಸೆಯವರು ಆ ನಗರಗಳ ನಿವಾಸಿಗಳನ್ನು ಹೊರದೂಡಲಾಗಲಿಲ್ಲ. ಕಾನಾನ್ಯರಿಗೆ ಅಲ್ಲೇ ವಾಸಿಸಲು ಅನುಕೂಲವಾಯಿತು.</verse>
				<verse number="13">ಇಸ್ರಯೇಲರು ಬಲಗೊಂಡ ಮೇಲೂ ಕಾನಾನ್ಯರನ್ನು ಹೊರದೂಡದೆ ಅವರನ್ನು ಜೀತದಾರರನ್ನಾಗಿಸಿಕೊಂಡರು.</verse>
				<verse number="14">ಜೋಸೆಫ್ಯರು ಯೆಹೋಶುವನಿಗೆ, “ನೀವು ಚೀಟುಹಾಕಿ, ನಮಗೆ ಒಂದೇ ಒಂದುಭಾಗವನ್ನು ಕೊಟ್ಟಿದ್ದೀರಿ, ಇದು ಸರಿಯೆ? ಸರ್ವೇಶ್ವರ ಸ್ವಾಮಿ ನಮ್ಮನ್ನು ಇಂದಿನವರೆಗೂ ಆಶೀರ್ವದಿಸಿ ನಮ್ಮನ್ನು ಮಹಾಜನಾಂಗವಾಗಿಸಿದ್ದಾರಲ್ಲವೆ?” ಎಂದು ಕೇಳಿಕೊಂಡರು.</verse>
				<verse number="15">ಅದಕ್ಕೆ ಯೆಹೋಶುವನು, “ಮಹಾಜನಾಂಗವಾದ ನಿಮಗೆ ಎಫ್ರಯಿಮ್ ಮಲೆನಾಡು ಸಾಲದಿದ್ದರೆ ಪೆರಿಜ್ಜೀಯರ ಮತ್ತು ರೆಫಾಯರ ನಾಡುಗಳಿಗೆ ಹೋಗಿ ಅಲ್ಲಿನ ಕಾಡು ಕಡಿದು ಸ್ಥಳ ಮಾಡಿಕೊಳ್ಳಿ,” ಎಂದನು.</verse>
				<verse number="16">ಅವರು ಮತ್ತೆ ಯೆಹೋಶುವನಿಗೆ, “ನಮ್ಮ ಮಲೆನಾಡು ನಮಗೆ ಸಾಲುವುದಿಲ್ಲ. ಬೇತ್ ಷೆಯಾನ್ ಮತ್ತು ಅದಕ್ಕೆ ಸೇರಿದ ಊರುಗಳಿರುವ ಕಣಿವೆಯಲ್ಲೂ ಹಾಗೂ ಇಜ್ರೇಲಿನ ಕಣಿವೆಯಲ್ಲೂ ವಾಸಮಾಡುವ ಕಾನಾನ್ಯರೆಲ್ಲರು ಕಬ್ಬಿಣದ ರಥವುಳ್ಳವರು,” ಎಂದರು.</verse>
				<verse number="17">ಯೆಹೋಶುವನು ಜೋಸೆಫ್ಯರಾದ ಎಫ್ರಯಿಮ್ - ಮನಸ್ಸೆಕುಲದ ಆ ಜನರಿಗೆ, “ನೀವು ಮಹಾಜನಾಂಗ ಹಾಗೂ ಶಕ್ತಿಶಾಲಿಗಳೆಂಬುದೇನೋ ನಿಜ. ನೀವು ಒಂದು ಪಾಲಿಗಿಂತ ಹೆಚ್ಚು ತೆಗೆದುಕೊಳ್ಳಬಹುದಾಗಿದೆ.</verse>
				<verse number="18">ಆಮೇಲೆ ನಾಡನ್ನು ನಿಮಗೆ ಕೊಟ್ಟಿರುತ್ತೇನೆ. ಅದರಲ್ಲಿ ಕಾಡುಗಳಿದ್ದರೂ ನೀವು ಅವುಗಳನ್ನು ಕಡಿದು ಹಾಕಬಹುದು. ಅದಕ್ಕೆ ಸೇರಿರುವ ಬಯಲುಭೂಮಿ ನಿಮ್ಮದೇ. ಕಾನಾನ್ಯರು ಬಲಿಷ್ಠರು ಹಾಗೂ ಕಬ್ಬಿಣದ ರಥಗಳುಳ್ಳವರು. ಆದರೂ ನೀವು ಅವರನ್ನು ಹೊರದೂಡಬಲ್ಲಿರಿ,” ಎಂದು ಉತ್ತರ ಕೊಟ್ಟನು.</verse>
			</chapter>
			<chapter number="18">
				<verse number="1">ನಾಡೆಲ್ಲವು ತಮ್ಮ ವಶವಾದ ಮೇಲೆ ಇಸ್ರಯೇಲ್ ಜನಾಂಗವೆಲ್ಲ ಶೀಲೋವಿನಲ್ಲಿ ಕೂಡಿ ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.</verse>
				<verse number="2">ಇಸ್ರಯೇಲರಲ್ಲಿ ಇನ್ನೂ ಏಳು ಕುಲಗಳಿಗೆ ಪಾಲು ಸಿಕ್ಕಿರಲಿಲ್ಲ.</verse>
				<verse number="3">ಆದುದರಿಂದ ಯೆಹೋಶುವ ಅವರಿಗೆ, “ನಿಮ್ಮ ಪೂರ್ವಜರ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟ ನಾಡನ್ನು ಸ್ವಾಧೀನ ಮಾಡಿಕೊಳ್ಳಲು ಇನ್ನೆಷ್ಟು ತಡ ಮಾಡುತ್ತಿರುವಿರಿ?</verse>
				<verse number="4">ಪ್ರತಿಯೊಂದು ಕುಲದಿಂದ ಮೂರುಮೂರು ಮಂದಿಯನ್ನು ನೇಮಿಸಿರಿ. ನಾನು ಅವರನ್ನು ಕಳುಹಿಸುವೆನು. ಅವರು ಹೋಗಿ ನಾಡಿನಲ್ಲೆಲ್ಲಾ ಸಂಚಾರಮಾಡಿ ತಮ್ಮ ತಮ್ಮ ಕುಲಗಳಿಗನುಸಾರ ಎಲ್ಲಾ ಪ್ರದೇಶಗಳ ಪಟ್ಟಿಯನ್ನು ಬರೆದುಕೊಂಡು ನನ್ನ ಬಳಿಗೆ ಬರಲಿ.</verse>
				<verse number="5">ತರುವಾಯ ಅವರು ಏಳು ಪಾಲುಗಳನ್ನು ಮಾಡಿ ತಮ್ಮ ತಮ್ಮೊಳಗೆ ಹಂಚಿಕೊಳ್ಳಲಿ. ದಕ್ಷಿಣದಲ್ಲಿ ಯೆಹೂದ ಕುಲದವರಿಗೆ ಉತ್ತರದಲ್ಲಿ ಜೋಸೆಫನ ಕುಲದವರಿಗೆ ಸೊತ್ತು ಸಿಕ್ಕಿದೆ. ಅದು ಅವರಿಗೇ ಇರಲಿ.</verse>
				<verse number="6">ನೀವು ನಾಡನ್ನು ಏಳು ಪಾಲಾಗಿ ವಿಂಗಡಿಸಿ ನನ್ನ ಬಳಿಗೆ ಬರಬೇಕು. ನಾನು ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ನಿಮಗೋಸ್ಕರ ಚೀಟು ಹಾಕುತ್ತೇನೆ.</verse>
				<verse number="7">ಲೇವಿಯರಿಗೆ ನಿಮ್ಮ ಹಾಗೆ ಪಾಲು ಸಿಕ್ಕುವುದಿಲ್ಲ. ಸರ್ವೇಶ್ವರನಿಗೆ ಸಲ್ಲಿಸುವ ಯಾಜಕ ಸೇವೆಯೇ ಅವರ ಸೊತ್ತು. ಗಾದ್ ಹಾಗೂ ರೂಬೇನ್ ಕುಲಗಳಿಗೂ ಮನಸ್ಸೆ ಕುಲದ ಅರ್ಧಜನರಿಗೂ ಜೋರ್ಡನಿನ ಪೂರ್ವದಿಕ್ಕಿನಲ್ಲಿ ಸರ್ವೇಶ್ವರನ ದಾಸ ಮೋಶೆಯಿಂದಲೇ ಸೊತ್ತು ಸಿಕ್ಕಿದೆ,” ಎಂದನು.</verse>
				<verse number="8">ನಾಡಿನ ಅಳತೆಯನ್ನು ಮಾಡತಕ್ಕ ಜನರು ಹೊರಡುವುದಕ್ಕೆ ಮುಂಚೆ ಯೆಹೋಶುವನು ಅವರಿಗೆ, “ಹೋಗಿ ನಾಡಿನಲ್ಲೆಲ್ಲಾ ಸಂಚರಿಸಿ ಅಳತೆಮಾಡಿ ನನ್ನ ಬಳಿ ಶೀಲೋವಿಗೆ ತನ್ನಿ. ನಾನು ಸರ್ವೇಶ್ವರನ ಮುಂದೆ ನಿಮಗೋಸ್ಕರ ಚೀಟು ಹಾಕುತ್ತೇನೆ,” ಎಂದು ಹೇಳಿ ಕಳುಹಿಸಿದನು.</verse>
				<verse number="9">ಆ ಜನರು ಹೊರಟು ನಾಡಿನಲ್ಲೆಲ್ಲಾ ಸಂಚರಿಸಿ ಒಂದು ಪುಸ್ತಕದಲ್ಲಿ ಗ್ರಾಮ-ನಗರಗಳನ್ನೆಲ್ಲಾ ಬರೆದು ಏಳು ಭಾಗಗಳನ್ನಾಗಿ ಮಾಡಿ ಶೀಲೋವಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ಹಿಂದಿರುಗಿ ಬಂದರು.</verse>
				<verse number="10">ಯೆಹೋಶುವನು ಶೀಲೋವಿನಲ್ಲಿಯೇ ಸರ್ವೇಶ್ವರನ ಮುಂದೆ ಅವರಿಗೋಸ್ಕರ ಚೀಟು ಹಾಕಿ ನಾಡನ್ನು ಅವರವರ ಪಂಗಡಗಳಿಗೆ ಹಂಚಿಕೊಟ್ಟನು.</verse>
				<verse number="11">ಚೀಟು ಮೊದಲು ಬೆನ್ಯಾಮೀನ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಸೊತ್ತು ಯೆಹೂದಾ ಮತ್ತು ಜೋಸೆಫ್ ವಂಶಸ್ಥರ ಪ್ರಾಂತ್ಯಗಳಿಗೆ ಮಧ್ಯೆಯಿದೆ.</verse>
				<verse number="12">ಅದರ ಉತ್ತರ ದಿಕ್ಕಿನ ಎಲ್ಲೆ ಜೋರ್ಡನ್ ನದಿಯಿಂದ ತೊಡಗಿ ಜೆರಿಕೋವಿನ ಉತ್ತರದಲ್ಲಿರುವ ಗುಡ್ಡದ ಮೇಲಿಂದ ಪಶ್ಚಿಮಕ್ಕೆ ಹೋಗಿ, ದಿಣ್ಣೆ ಹತ್ತಿ ಬೆತಾವೆನಿನ ಬಯಲಿನಲ್ಲಿ ಕೊನೆಗೊಳ್ಳುತ್ತದೆ.</verse>
				<verse number="13">ಅಲ್ಲಿಂದ ದಕ್ಷಿಣಕ್ಕೆ ತಿರುಗಿಕೊಂಡು ಈಗ ಬೇತೇಲ್ ಎನಿಸಿಕೊಳ್ಳುವ ಲೂಜ್ ಊರಿರುವ ಬೆಟ್ಟಕ್ಕೆ ಹೋಗಿ ಅಲ್ಲಿಂದ ಇಳಿದು ಅಟಾರೋತದ್ದಾರಿನ ಮೇಲೆ ಕೆಳಗಿನ ಬೇತ್ ಹೋರೋನಿನ ಬಳಿಯಲ್ಲಿರುವ ಬೆಟ್ಟಕ್ಕೆ ಹೋಗುತ್ತದೆ.</verse>
				<verse number="14">ಈ ಎಲ್ಲೆಯ ಪಶ್ಚಿಮದ ಮೂಲೆಯಾಗಿರುವ ಈ ಬೆಟ್ಟದಿಂದ ಅದು ದಕ್ಷಿಣಕ್ಕೆ ತಿರುಗಿಕೊಂಡು, ಕಿರ್ಯತ್ ಬಾಳ್ ಎನಿಸಿಕೊಳ್ಳುತ್ತಿದ್ದ ಯೆಹೂದ್ಯರ ಕಿರ್ಯತ್ಯಾರೀಮ್ ಎಂಬ ನಗರದಲ್ಲಿ ಕೊನೆಗೊಳ್ಳುತ್ತದೆ. ಇದೇ ಅವರ ವಂಶಸ್ಥರ ಪಶ್ಚಿಮದ ಎಲ್ಲೆ.</verse>
				<verse number="15">ದಕ್ಷಿಣ ದಿಕ್ಕಿನ ಎಲ್ಲೆ ಪಶ್ಚಿಮದ ಮೂಲೆಯಾಗಿರುವ ಕಿರ್ಯತ್ಯಾರೀಮಿನ ಪ್ರಾಂತ್ಯದಿಂದ ತೊಡಗಿ</verse>
				<verse number="16">ನೆಫ್ತೋಹ ಬುಗ್ಗೆಯ ಮೇಲೆ ಬೆನ್ ಹಿನ್ನೋಮ್ ಕಣಿವೆಯ ಉತ್ತರದಲ್ಲೂ ಇರುವ ಬೆಟ್ಟದ ಅಂಚಿಗೆ ಹೋಗಿ ಅಲ್ಲಿಂದ ಯೆಬೂಸಿಯರ ಬೆಟ್ಟದ ದಕ್ಷಿಣದಲ್ಲಿದ್ದ ಬೆನ್ ಹಿನ್ನೋಮ್ ಕಣಿವೆಯ ಮಾರ್ಗವಾಗಿ ಏನ್ ರೋಗೆಲಿಗೆ ಬರುತ್ತದೆ.</verse>
				<verse number="17">ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು, ಇಳಿಯುತ್ತಾ ಏನ್ ಷೆಮೆಸ್, ಮೀಮಿನ ದಾರಿಯ ಎದುರಿನಲ್ಲಿರುವ ಗೆಲೀಲೊತ್,</verse>
				<verse number="18">ರೂಬೇನನ ಮಗನಾದ ಬೋಹನನ ಬಂಡೆ, ಅರಾಬಾದ ಉತ್ತರದಲ್ಲಿರುವ ಬೆಟ್ಟ ಇವುಗಳ ಮೇಲೆ ಅರಾಬಾ ಎಂಬ ಕಣಿವೆ ಪ್ರದೇಶಕ್ಕೆ ಹೋಗುತ್ತದೆ.</verse>
				<verse number="19">ಅಲ್ಲಿಂದ ಆ ಎಲ್ಲೆ ಬೇತ್ ಹೊಗ್ಲಾ ಎಂಬ ಊರಿನ ಉತ್ತರದಲ್ಲಿರುವ ಗುಡ್ಡದ ಮೇಲೆ ಲವಣಸಮುದ್ರದ ಉತ್ತರ ಮೂಲೆಗೆ ಹೋಗಿ ಜೋರ್ಡನ್ ನದಿಯು ಆ ಸಮುದ್ರಕ್ಕೆ ಕೂಡುವ ಸ್ಥಳದಲ್ಲಿ ಮುಗಿಯುತ್ತದೆ. ಇದೇ ದಕ್ಷಿಣದಿಕ್ಕಿನ ಸರಹದ್ದು.</verse>
				<verse number="20">ಜೋರ್ಡನ್ ನದಿಯೇ ಅವರ ಪೂರ್ವದಿಕ್ಕಿನ ಸರಹದ್ದು, ಬೆನ್ಯಾಮೀನ್ ಗೋತ್ರಗಳ ಸೊತ್ತಿನ ಸುತ್ತಣ ಎಲ್ಲೆ ಇದೇ.</verse>
				<verse number="21">ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ನಗರಗಳು ಯಾವುವೆಂದರೆ: ಜೆರಿಕೊ, ಬೇತ್ ಹೊಗ್ಲಾ, ಏಮೆಕ್ಕೆಚ್ಚೀಚ್, ಬೇತ್ ಅರಾಬಾ,</verse>
				<verse number="22">ಚಮಾರಯಿಮ್, ಬೇತೇಲ್, ಅವ್ವೀಮ್, ಪಾರಾ,</verse>
				<verse number="23">ಒಫ್ರಾ, ಅಮ್ಮೋನ್ಯ, ಕೆಫೆರ್, ಒಫ್ನೀ, ಗೆಬಾ ಎಂಬ ಹನ್ನೆರಡು ನಗರಗಳು ಮತ್ತು ಅವುಗಳಿಗೆ ಸೇರಿದ ಗ್ರಾಮಗಳು;</verse>
				<verse number="24"></verse>
				<verse number="25">ಗಿಬ್ಯೋನ್, ರಾಮಾ, ಬೇರೋತ್,</verse>
				<verse number="26">ಮಿಚ್ಫೆ, ಕೆಫೀರಾ, ಮೋಚಾ, ರೆಕೆಮ್, ಇರ್ಪೇಲ್, ತರಲಾ, ಚೇಲ,‌</verse>
				<verse number="27"></verse>
				<verse number="28">ಎಲೆಫ್, ಯೆಬೂಸಿಯರು ಇದ್ದಂಥ ಜೆರೂಸಲೇಮ್, ಗಿಬೆಯತ್, ಕಿರ್ಯತ್ ಎಂಬ ಹದಿನಾಲ್ಕು ನಗರಗಳೂ ಮತ್ತು ಅವುಗಳಿಗೆ ಸೇರಿದ ಗ್ರಾಮಗಳು. ಬೆನ್ಯಾಮೀನ್ ಗೋತ್ರಗಳಿಗೆ ದೊರಕಿದ ಆಸ್ತಿಪಾಸ್ತಿ ಇವೇ.</verse>
			</chapter>
			<chapter number="19">
				<verse number="1">ಎರಡನೇ ಸಾರಿಯ ಚೀಟು ಸಿಮೆಯೋನ್ ಕುಲದವರಿಗೆ ಬಿದ್ದಿತು. ಈ ಸಿಮೆಯೋನ್ ಕುಲದ ಗೋತ್ರಗಳ ಸೊತ್ತು ಯೂದಕುಲದವರ ಸೊತ್ತಿನ ಮಧ್ಯದಲ್ಲಿತ್ತು.</verse>
				<verse number="2">ಅದರ ಊರುಗಳು ಇವು: ಬೇರ್ಷೆಬ,</verse>
				<verse number="3">ಶೆಬ, ಮೋಲಾದಾ, ಹಚರ್ ಷೂವಾಲ್, ಬಾಲಾ,</verse>
				<verse number="4">ಎಚೆಮ್, ಎಲ್ತೋಲದ್, ಬೆತೂಲ್,</verse>
				<verse number="5">ಹೊರ್ಮಾ, ಚಿಕ್ಲಗ್, ಬೇತ್ ಮಾರ್ಕಾಬೋತ್,</verse>
				<verse number="6">ಹಚರ್ ಸೂಸಾ, ಬೇತ್ ಲೆಬಾವೋತ್, ಶಾರೂಹೆನ್ ಎಂಬ ಹದಿಮೂರು ನಗರಗಳು ಮತ್ತು ಅವುಗಳ ಗ್ರಾಮಗಳು.</verse>
				<verse number="7">ಆಯಿನ್, ರಿಮ್ಮೋನ್, ಏತೆರ್, ಅಷಾನ್ ಎಂಬ ನಾಲ್ಕು ನಗರಗಳು ಮತ್ತವುಗಳ ಗ್ರಾಮಗಳು;</verse>
				<verse number="8">ಅವುಗಳ ಸುತ್ತಣ ಪ್ರದೇಶದಲ್ಲಿ ಬಾಲತ್ ಬೇರ್ ಎಂಬ ಊರಿನವರೆಗೆ ಇತರ ಗ್ರಾಮಗಳು ಇವೆ. ಬಾಲತ್ ಬೇರ್ ಎಂಬುದು ದಕ್ಷಿಣದ ರಾಮ ಎನಿಸಿಕೊಳ್ಳುತ್ತದೆ. ಸಿಮೆಯೋನ್ ಕುಲದ ಗೋತ್ರಗಳಿಗೆ ಸಿಕ್ಕಿದ ಆಸ್ತಿ ಇದೇ.</verse>
				<verse number="9">ಈ ಆಸ್ತಿ ಯೂದವಂಶದ ಆಸ್ತಿಯಲ್ಲಿ ಒಂದು ಭಾಗ. ಯೂದವಂಶದವರಿಗೆ ದೊರಕಿದ ಪ್ರದೇಶ ಹೆಚ್ಚಾಗಿದ್ದುದರಿಂದ ಸಿಮೆಯೋನ್ಯರಿಗೆ ಅದರಲ್ಲೆ ಪಾಲು ಸಿಕ್ಕಿತು.</verse>
				<verse number="10">ಮೂರನೇ ಸಾರಿಯ ಚೀಟು ಜೆಬುಲೂನ್ಯರಿಗೆ ಬಿದ್ದಿತು. ಈ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತಿನ ಎಲ್ಲೆ.</verse>
				<verse number="11">ಸಾರೀದಿನಿಂದ ತೊಡಗಿ ಪಶ್ಚಿಮ ದಿಕ್ಕಿನಲ್ಲಿರುವ ಮರ್ಗಲಾ, ದಬ್ಬೆಷೆತ್ ಇವುಗಳ ಮೇಲೆ ಯೊಕ್ನೆಯಾಮ್ ಊರಿನ ಈಚೆಯಲ್ಲಿರುವ ಹಳ್ಳಕ್ಕೆ ಹೋಗುತ್ತದೆ.</verse>
				<verse number="12">ಅದೇ ಸಾರೀದಿನಿಂದ ಅದು ಪೂರ್ವದಿಕ್ಕಿನಲ್ಲಿ ಕಿಸ್ಲೋತ್ ತಾಬೋರಿನ ಎಲ್ಲೆಗೆ ಹತ್ತಿ ದಾಬೆರತಿಗೆ ಹೋಗುತ್ತದೆ. ಅಲ್ಲಿಂದ ಏರುತ್ತಾ ಯಾಫೀಯಕ್ಕೆ ಹೋಗುತ್ತದೆ.</verse>
				<verse number="13">ಅಲ್ಲಿಂದ ಮತ್ತೂ ಪೂರ್ವಕ್ಕೆ ಮುಂದುವರೆದು ಗತ್ ಹೇಫರ್, ಎತ್ ಕಾಚೀನ್ ಇವುಗಳ ಮೇಲೆ ನೇಯದ ಮಗ್ಗಲಲ್ಲಿರುವ ರಿಮ್ಮೇನಿಗೆ ಹೋಗುತ್ತದೆ.</verse>
				<verse number="14">ಅಲ್ಲಿಂದ ಅದು ಉತ್ತರಕ್ಕೆ ತಿರುಗಿಕೊಂಡು ಹನ್ನಾತೋನಿನ ಮೇಲೆ ಇಪ್ತಹೇಲಿನ ಕಣಿವೆಗೆ ಹೋಗಿ ಅಲ್ಲಿ ಮುಕ್ತಾಯಗೊಳ್ಳುತ್ತದೆ.</verse>
				<verse number="15">ಕಟ್ಟಾತ್, ನಹಲ್ಲಾಲ್, ಶಿಮ್ರೋನ್, ಇದಲಾ, ಬೆತ್ಲೆಹೇಮ್ ಇವೇ ಮೊದಲಾದ ಹನ್ನೆರಡು ನಗರಗಳೂ ಅವುಗಳಿಗೆ ಸೇರಿದ ಗ್ರಾಮಗಳು -</verse>
				<verse number="16">ಜೆಬುಲೂನ್ ಕುಲದ ಗೋತ್ರಗಳಿಗೆ ಸೊತ್ತಾಗಿ ದೊರಕಿದವು.</verse>
				<verse number="17">ನಾಲ್ಕನೇ ಸಾರಿಯ ಚೀಟು ಇಸ್ಸಾಕಾರ್ ಕುಲದವರಿಗೆ ಬಿದ್ದಿತು. ಅದರ ಗೋತ್ರಗಳಿಗೆ ಸಿಕ್ಕಿದ ನಾಡಿನಲ್ಲಿರುವ ನಗರಗಳು ಯಾವುವು ಎಂದರೆ -</verse>
				<verse number="18">ಇಜ್ರೇಲ್, ಕೆಸುಲ್ಲೋತ್,</verse>
				<verse number="19">ಶೂನೇಮ್, ಹಫಾರಯಿಮ್, ಶೀಯೋನ್,</verse>
				<verse number="20">ಅನಾಹರತ್, ರಬ್ಬೀತ್, ಕಿಷ್ಯೋನ್, ಎಬೆಜ್,</verse>
				<verse number="21">ರೆಮೆತ್, ಏಂಗನ್ನೀಮ್, ಏನ್ ಹದ್ದಾ, ಬೇತ್ ಪಚ್ಚೇಚ್,</verse>
				<verse number="22">ತಾಬೋರ್, ಶಹಚೀಮಾ, ಬೇತ್ ಷೆಮೆಷ್ ಎಂಬ ಊರುಗಳೂ ಅದರ ಮೇರೆಯೊಳಗಿದ್ದವು. ಈ ಮೇರೆಯು ಜೋರ್ಡನ್ ನದಿಯ ತೀರದಲ್ಲಿ ಮುಗಿಯುತ್ತದೆ.</verse>
				<verse number="23">ಒಟ್ಟಾರೆ ಹದಿನಾರು ನಗರಗಳೂ ಅವುಗಳ ಗ್ರಾಮಗಳೂ ಇಸ್ಸಾಕಾರ್ ಕುಲದ ಗೋತ್ರಗಳಿಗೆ ದೊರಕಿದವು.</verse>
				<verse number="24">ಐದನೇ ಸಾರಿಯ ಚೀಟು ಅಶೇರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಊರುಗಳು ಇವು:</verse>
				<verse number="25">ಹೆಲ್ಕತ್, ಹಲೀ, ಬೆಟೆನ್, ಅಕ್ಷಾಫ್,</verse>
				<verse number="26">ಅಲಮ್ಮೆಲೆಕ್, ಅಮಾದ್, ಮಿಷಾಲ್. ಇವರ ನಾಡಿನ ಎಲ್ಲೆ ಪಶ್ಚಿಮದಲ್ಲಿ ಕರ್ಮೆಲ್ ಬೆಟ್ಟಕ್ಕೂ ಶೀಹೋರ್ ಲಿಬ್ನತ್ ಎಂಬ ಹಳ್ಳಕ್ಕೂ ತಾಕಿ</verse>
				<verse number="27">ಅಲ್ಲಿಂದ ಪೂರ್ವಕ್ಕೆ ತಿರುಗಿ ಬೇತ್ ದಾಗೋನಿಗೆ ಹೋಗುತ್ತದೆ. ಅಲ್ಲಿಂದ ಜೆಬುಲೂನ್ಯರ ಎಲ್ಲೆಗೂ ಇಫ್ತಹೇಲ್ ಕಣಿವೆಯ ಉತ್ತರದಿಕ್ಕಿನ ಮೂಲೆಗೂ ಹೊಂದಿಕೊಂಡು ಬೇತ್ ಏಮೆಕ್, ನೆಗೀಯೆಲ್ ಇವುಗಳ ಮೇಲೆ ಉತ್ತರಕ್ಕೆ ಮುಂದುವರೆದು</verse>
				<verse number="28">ಕಾಬೂಲ್, ಎಬ್ರೋನ್, ರೆಹೋಬ್, ಹಮ್ಮೋನ್, ಕಾನಾ ಇವುಗಳ ಮೇಲೆ ಸಿದೋನ್ ಎಂಬ ಮಹಾನಗರಕ್ಕೆ ಹೋಗುತ್ತದೆ.</verse>
				<verse number="29">ಅಲ್ಲಿಂದ ಅದು ತಿರುಗಿಕೊಂಡು ರಾಮಾ, ಟೈರ್ ಕೋಟೆ, ಹೋಸಾ ಇವುಗಳ ಮೇಲೆ ಅಕ್ಜೀಬ್ ಪ್ರಾಂತ್ಯಕ್ಕೆ ಹೋಗಿ ಸಮುದ್ರತೀರದಲ್ಲಿ ಕೊನೆಗೊಳ್ಳುತ್ತದೆ.</verse>
				<verse number="30">ಉಮ್ಮಾ, ಅಫೇಕ್, ರೆಹೂಬ್ ಇವೇ ಮೊದಲಾದ ಇಪ್ಪತ್ತೆರಡು ನಗರಗಳೂ ಅವುಗಳ ಗ್ರಾಮಗಳೂ</verse>
				<verse number="31">ಅಶೇರ್ ಕುಲದ ಗೋತ್ರಗಳ ಸೊತ್ತಾಗಿವೆ.</verse>
				<verse number="32">ಆರನೇ ಸಾರಿಯ ಚೀಟು ನಫ್ತಾಲಿ ಕುಲದವರಿಗೆ ಬಿದ್ದಿತು. ಆ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತಿನ ಎಲ್ಲೆ ಹೀಗಿದೆ:</verse>
				<verse number="33">ಚಾನನ್ನೀಮಿನಲ್ಲಿರುವ ಹೇಲೆಫಿನ ಅಲ್ಲೋನ್ ಮರದಿಂದ ತೊಡಗಿ ಅದಾಮೀನೆಕೆಬ್, ಯೆಬ್ನೆಯೇಲ್ ಇವುಗಳ ಮೇಲೆ ಲಕ್ಕೂಮಿಗೆ ಹೋಗಿ ಜೋರ್ಡನ್ ನದಿಯ ತೀರದಲ್ಲಿ ಮುಗಿಯುತ್ತದೆ.</verse>
				<verse number="34">ಮತ್ತೆ ಅದೇ ಸ್ಥಳದಿಂದ ತೊಡಗಿ ಅಜ್ನೋತ್ ತಾಬೋರಿನ ಮೇಲೆ ಹುಕ್ಕೋಕಿಗೆ ಹೋಗುತ್ತದೆ. ದಕ್ಷಿಣದಲ್ಲಿ ಜೆಬುಲೂನ್ಯರ ಎಲ್ಲೆಗೂ ಪಶ್ಚಿಮದಲ್ಲಿ ಆಶೇರ್ಯರ ಮತ್ತು ಯೂದವಂಶದವರ ಎಲ್ಲೆಗೂ ಪೂರ್ವದಲ್ಲಿ ಜೋರ್ಡನ್ ನದಿಗೂ ಹೊಂದಿಕೊಂಡಿರುತ್ತದೆ.</verse>
				<verse number="35">ಚಿದ್ದೀಮ್, ಚೇರ್, ಹಮ್ಮತ್,</verse>
				<verse number="36">ರಕ್ಕತ್, ಕಿನ್ನೆರೆತ್, ಅದಾಮಾ, ರಾಮಾ, ಹಾಚೋರ್,</verse>
				<verse number="37">ಕೆದೆಷ್, ಎದ್ರೈ, ಏನ್ ಹಾಚೋರ್, ಇರೋನ್, ಮಿಗ್ದಲೇಲ್, ಹೊರೇಮ್, ಬೇತನಾತ್, ಬೇತ್ ಷೆಮೆಷ್ ಇವೇ ಮೊದಲಾದ ಹತ್ತೊಂಬತ್ತು ಕೋಟೆಕೊತ್ತಲಗಳುಳ್ಳ ನಗರಗಳೂ ಅವುಗಳ ಗ್ರಾಮಗಳೂ</verse>
				<verse number="38"></verse>
				<verse number="39">ನಫ್ತಾಲಿ ಕುಲದ ಗೋತ್ರಗಳಿಗೆ ಸಿಕ್ಕಿದ ಸೊತ್ತಾಗಿವೆ.</verse>
				<verse number="40">ಏಳನೇ ಸಾರಿಯ ಚೀಟು ದಾನ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸೊತ್ತಾಗಿ ದೊರಕಿದ ಊರುಗಳು ಇವು:</verse>
				<verse number="41">ಚೊರ್ಗಾ, ಎಷ್ಟಾವೋಲ್,</verse>
				<verse number="42">ಈರ್ಷೆಮೆಷ್, ಶಾಲಬ್ಬೀನ್, ಅಯ್ಯಾಲೋನ್,</verse>
				<verse number="43">ಇತ್ಲಾ, ಏಲೋನ್, ತಿಮ್ಮಾ, ಎಕ್ರೋನ್, ಎಲ್ತೆಕೇ,</verse>
				<verse number="44"></verse>
				<verse number="45">ಗಿಬ್ಬೆತೋನ್, ಬಾಲತ್, ಯೆಹುದ್, ಬೆನೇಬೆರಕ್,</verse>
				<verse number="46">ಗತ್ ರಿಮ್ಮೋನ್, ಮೇಯರ್ಕೋನ್, ರಕ್ಕೋನ್, ಮತ್ತು ಜೊಪ್ಪಕ್ಕೆ ಎದುರಿಗಿರುವ ಪ್ರದೇಶವೂ ಇವರಿಗೆ ದೊರಕಿತು.</verse>
				<verse number="47">ದಾನ್ ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವುದಕ್ಕಾಗಿ ಹೊರಟು ಲೆಷೆಮಿನವರೊಡನೆ ಯುದ್ಧಮಾಡಿ ಜಯಿಸಿದರು. ಆ ಜನರನ್ನು ಕತ್ತಿಯಿಂದ ಸಂಹರಿಸಿ ಅವರ ನಗರವನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು. ಅಲ್ಲದೆ, ಅದಕ್ಕೆ ತಮ್ಮ ಮೂಲ ಪುರುಷನ ಹೆಸರಾದ ದಾನ್ ಎಂಬ ಹೆಸರನ್ನಿಟ್ಟರು.</verse>
				<verse number="48">ದಾನ್ ಕುಲದ ಗೋತ್ರಗಳಿಗೆ ದೊರಕಿದ ಸೊತ್ತು ಹಾಗೂ ಅದರಲ್ಲಿದ್ದ ನಗರ ಹಾಗೂ ಗ್ರಾಮಗಳು ಇವೇ.</verse>
				<verse number="49">ಇಸ್ರಯೇಲರು ನಾಡನ್ನು ಎಲ್ಲೆಎಲ್ಲೆಗಳ ಪ್ರಕಾರ ತಮ್ಮೊಳಗೆ ಹಂಚಿಕೊಂಡ ಮೇಲೆ ನೂನನ ಮಗ ಯೆಹೋಶುವನಿಗೂ ತಮ್ಮದರಲ್ಲಿ ಪಾಲು ಕೊಟ್ಟರು.</verse>
				<verse number="50">ಆತ ತನಗೋಸ್ಕರ ಎಫ್ರಯಿಮರ ಮಲೆನಾಡಿನಲ್ಲಿರುವ ‘ತಿಮ್ನತ್ ಸೆರಹ’ ಎಂಬ ನಗರವನ್ನು ಕೇಳಿಕೊಂಡನು. ಸರ್ವೇಶ್ವರನ ಆಜ್ಞೆಯಂತೆ ಅವರು ಅದನ್ನು ಅವನಿಗೆ ಕೊಟ್ಟರು. ಅವನು ಅದನ್ನು ಹೊಸದಾಗಿ ಕಟ್ಟಿ ಅದರಲ್ಲೇ ವಾಸಮಾಡಿದನು.</verse>
				<verse number="51">ಹೀಗೆ ಯಾಜಕ ಎಲ್ಲಾಜಾರನು, ನೂನನ ಮಗ ಯೆಹೋಶುವ ಮತ್ತು ಇಸ್ರಯೇಲ್ ಕುಲ ಮುಖ್ಯಸ್ಥರೂ ಶೀಲೋವಿನಲ್ಲಿದ್ದ ದೇವದರ್ಶನದ ಗುಡಾರದ ದ್ವಾರದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲೇ ಚೀಟುಹಾಕಿ ಪ್ರಾಂತ್ಯಗಳನ್ನು ಹಂಚಿಕೊಟ್ಟರು; ನಾಡಿನ ವಿಭಜನಾಕಾರ್ಯ ಮುಗಿಯಿತು.</verse>
			</chapter>
			<chapter number="20">
				<verse number="1">ಸರ್ವೇಶ್ವರಸ್ವಾಮಿ ಯೆಹೋಶುವನಿಗೆ, “ನೀನು ಇಸ್ರಯೇಲರಿಗೆ</verse>
				<verse number="2">‘ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಆಜ್ಞಾಪಿಸಿರುವಂತೆ ನೀವು ಆಶ್ರಯ ನಗರಗಳನ್ನು ಗೊತ್ತುಮಾಡಿಕೊಳ್ಳಿ;</verse>
				<verse number="3">ನಿಮ್ಮಲ್ಲಿ ಯಾರಾದರು ಅರಿಯದೆ ಅಕಸ್ಮಾತ್ತಾಗಿ ನರಹತ್ಯೆ ಮಾಡಿದ್ದೇ ಆದರೆ ಅಂಥವನು ಅಲ್ಲಿಗೆ ಓಡಿಹೋಗಲಿ. ಹತನಾದವನ ಹತ್ತಿರದ ಬಂಧು ಮುಯ್ಯಿತೀರಿಸದಂತೆ ಆ ನಗರಗಳು ನಿಮಗೆ ಆಶ್ರಯ ಸ್ಥಾನವಾಗಿರಲಿ.</verse>
				<verse number="4">ಅಂಥ ನಗರಕ್ಕೆ ಓಡಿಹೋದವನು ಮೊದಲು ಊರಬಾಗಿಲಲ್ಲೇ ನಿಂತುಕೊಂಡು ಅಲ್ಲಿನ ಹಿರಿಯರಿಗೆ ತನ್ನ ಸಂಗತಿಯನ್ನು ತಿಳಿಯಪಡಿಸಲಿ. ಅವರು ಅವನನ್ನು ಊರೊಳಗೆ ಸೇರಿಸಿಕೊಳ್ಳಲಿ; ವಾಸಕ್ಕೆ ಸ್ಥಳಕೊಡಲಿ.</verse>
				<verse number="5">ಹತನಾದವನ ಹತ್ತಿರದ ಬಂಧು, ಕೊಂದವನನ್ನು ಹಿಂದಟ್ಟಿಕೊಂಡು ಅಲ್ಲಿಗೆ ಬಂದರೆ, ಅವರು ಅವನನ್ನು ಅವನ ಕೈಗೆ ಒಪ್ಪಿಸಬಾರದು. ಏಕೆಂದರೆ ಅವನು ನೆರೆಯವನನ್ನು ಕೊಂದದ್ದು ಅಕಸ್ಮಾತ್ತಾಗಿ, ಹಳೆಯ ದ್ವೇಷದಿಂದೇನೂ ಅಲ್ಲ.</verse>
				<verse number="6">ಅಂಥವನನ್ನು ಒಂದು ಸಭೆಸೇರಿಸಿ ವಿಚಾರಿಸಬೇಕು. ಅವನು ಆಗಿನ ಪ್ರಧಾನ ಯಾಜಕನ ಜೀವಮಾನವೆಲ್ಲಾ ಅದೇ ನಗರದಲ್ಲಿರಬೇಕು. ಆಮೇಲೆ ತಾನು ಬಿಟ್ಟುಬಂದ ಊರಿಗೆ, ಮನೆಗೆ ಹಿಂದಿರುಗಬಹುದು’ ಎಂದು ತಿಳಿಸು,” ಎಂದರು.</verse>
				<verse number="7">ಅಂತೆಯೇ ಇಸ್ರಯೆಲರು ನಫ್ತಾಲಿ ಕುಲದವರ ಮಲೆನಾಡಿನ ಪ್ರದೇಶವಾದ ಗಲಿಲೇಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಯಿಮ್ ಮಲೆನಾಡಿನ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೂದವಂಶದ ಮಲೆನಾಡಿನ ಹೆಬ್ರೋನ್ ಎನಿಸಿಕೊಳ್ಳುವ ಕಿರ್ಯತರ್ಬ ಎಂಬ ನಗರಗಳನ್ನು ನೇಮಿಸಿದರು.</verse>
				<verse number="8">ಇವುಗಳನ್ನು ಮಾತ್ರವಲ್ಲ ಜೆರಿಕೋವಿನ ಪೂರ್ವದಲ್ಲಿರುವ ಜೋರ್ಡನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಮರುಭೂಮಿಯಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತ್ಯದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ನಗರಗಳನ್ನು ನೇಮಿಸಿದರು.</verse>
				<verse number="9">ಇಸ್ರಯೇಲರೆಲ್ಲರಿಗೂ ಹಾಗೂ ಅವರ ನಡುವೆ ವಾಸಮಾಡುತ್ತಿದ್ದ ಹೊರನಾಡಿನವರಿಗೂ ಇವು ಆಶ್ರಯ ನಗರಗಳಾಗಿ ನೇಮಕ ಆಗಿದ್ದವು. ಅಕಸ್ಮಾತ್ತಾಗಿ ಬೇರೊಬ್ಬನನ್ನು ಕೊಂದವನು ಓಡಿಹೋಗಿ ಹತನಾದವನ ಹತ್ತಿರ ಬಂಧುವಿನಿಂದ ತಲೆ ತಪ್ಪಿಸಿಕೊಳ್ಳಬಹುದಿತ್ತು. ನ್ಯಾಯ ಸಭೆಯ ಮುಂದೆ ನಿಲ್ಲುವ ತನಕ ಅಲ್ಲೇ ಇರಬಹುದಿತ್ತು.</verse>
			</chapter>
			<chapter number="21">
				<verse number="1">ಲೇವಿ ಕುಲಾಧಿಪತಿಗಳು ಕಾನಾನ್ ನಾಡಿನ ಶೀಲೋವಿನಲ್ಲಿದ್ದ ಯಾಜಕ ಎಲ್ಲಾಜಾರ್, ನೂನನ ಮಗ ಯೆಹೋಶುವ ಮತ್ತು ಇಸ್ರಯೇಲ್ ಕುಲಾಧಿಪತಿಗಳ ಬಳಿಗೆ ಬಂದರು.</verse>
				<verse number="2">“ನಮ್ಮ ನಿವಾಸಕ್ಕೆ ನಗರಗಳನ್ನೂ ನಮ್ಮ ಪಶುಪ್ರಾಣಿಗಳಿಗೆ ಗೋಮಾಳಗಳನ್ನೂ ಕೊಡಬೇಕೆಂದು ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಆಜ್ಞಾಪಿಸಿದ್ದಾರಲ್ಲವೆ?” ಎಂದು ವಿನಂತಿಸಿದರು.</verse>
				<verse number="3">ಸರ್ವೇಶ್ವರನ ಆಜ್ಞೆಯಂತೆಯೇ ಅವರಿಗೆ ಸೊತ್ತಾಗಿ ಈ ಕೆಳಕಂಡ ನಗರಗಳನ್ನು ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಡಲಾಯಿತು.</verse>
				<verse number="4">ಕೆಹಾತ್ಯರಿಗಾಗಿ ಚೀಟು ಹಾಕಿದಾಗ ಆರೋನನ ವಂಶದವರಾದ ಲೇವಿಯರಿಗೆ ಯೆಹೂದ, ಸಿಮೆಯೋನ್ ಮತ್ತು ಬೆನ್ಯಾಮೀನ್ ಕುಲಗಳಿಂದ ಹದಿಮೂರು ನಗರಗಳು ದೊರಕಿದವು.</verse>
				<verse number="5">ಮಿಕ್ಕ ಕೆಹಾತ್ಯರಿಗೆ ಎಪ್ರಯಿಮ್ ಹಾಗೂ ದಾನ್ ಕುಲಗಳಿಂದ ಮತ್ತು ಮನಸ್ಸೆಯ ಅರ್ಧ ಕುಲಗಳಿಂದ ಹತ್ತು ನಗರಗಳು ಸಿಕ್ಕಿದವು.</verse>
				<verse number="6">ಮತ್ತೆ ಚೀಟು ಹಾಕಿದಾಗ ಗೇರ್ಷೋನ್ಯರಿಗೆ ಇಸ್ಸಾಕಾರ್, ಆಶೇರ್, ನಫ್ತಾಲಿ ಎಂಬ ಕುಲಗಳಿಂದ ಮತ್ತು ಬಾಷಾನಿನಲ್ಲಿರುವ ಮನಸ್ಸೆಯ ಅರ್ಧ ಕುಲದಿಂದ ಹದಿಮೂರು ನಗರಗಳು ದೊರೆತವು.</verse>
				<verse number="7">ಮೆರಾರಿ ಗೋತ್ರದವರಿಗೆ ರೂಬೇನ್, ಗಾದ್ ಹಾಗೂ ಜೆಬುಲೂನ್ ಕುಲಗಳಿಂದ ಹನ್ನೆರಡು ನಗರಗಳು ಸಿಕ್ಕಿದವು.</verse>
				<verse number="8">ಸರ್ವೇಶ್ವರ ಸ್ವಾಮಿ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ ಇಸ್ರಯೇಲರು ಚೀಟು ಹಾಕಿ ಲೇವಿಯರಿಗೆ ಇಷ್ಟು ನಗರಗಳನ್ನು ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು.</verse>
				<verse number="9">ಲೇವಿ ಕುಲದವರು ಹಾಗೂ ಕೆಹಾತನ ಗೋತ್ರದವರು ಆದ ಆರೋನನ ಕುಟುಂಬದವರಿಗೆ ಚೀಟು ಮೊದಲು ಬಿದ್ದಿತು.</verse>
				<verse number="10">ಆದ್ದರಿಂದ ಇಸ್ರಯೇಲರು ಅವರಿಗೆ ಯೆಹೂದ ಮತ್ತು ಸಿಮೆಯೋನ್ ಕುಲಗಳಿಂದ ಕೆಳಗೆ ಹೇಳಿರುವ ನಗರಗಳನ್ನು ಕೊಟ್ಟರು:</verse>
				<verse number="11">ಇವುಗಳಲ್ಲಿ ಯೆಹೂದ ಮಲೆನಾಡಿನ ಹೆಬ್ರೋನೆಂಬ ಗೋಮಾಳ ಸಹಿತವಾದ ಕಿರ್ಯತರ್ಬವೂ ಸೇರಿರುತ್ತದೆ. (ಕಿರ್ಯತರ್ಬ ಎಂದರೆ ಅನಾಕನ ತಂದೆಯಾದ ಅರ್ಬನನಗರ).</verse>
				<verse number="12">ಆದರೆ ಇದಕ್ಕೆ ಸೇರಿದ ಹೊಲಗಳನ್ನು ಮತ್ತು ಗ್ರಾಮಗಳನ್ನು ಯಫುನ್ನೆಯ ಮಗ ಕಾಲೇಬನಿಗೆ ಕೊಟ್ಟರು.</verse>
				<verse number="13">ಯಾಜಕ ಆರೋನನ ವಂಶದವರಿಗೆ ಮೇಲೆ ಹೇಳಿದ ಎರಡು ಕುಲಗಳಿಂದ ಹೆಬ್ರೋನ್ ಎಂಬ ಆಶ್ರಯ ನಗರ.</verse>
				<verse number="14">ಲಿಬ್ನಾ, ಯತ್ತೀರ್, ಎಷ್ಟೆಮೋಹ</verse>
				<verse number="15">ಹೋಲೋನ್, ದೆಬೀರ್, ಅಯಿನ್, ಯುಟ್ಟಾ, ಬೇತ್ ಷೆಮೆಷ್ ಎಂಬ ಒಂಬತ್ತು ಗೋಮಾಳ ಸಹಿತವಾದ ನಗರಗಳು</verse>
				<verse number="16"></verse>
				<verse number="17">ಹಾಗೂ ಬೆನ್ಯಾಮೀನ್ ಕುಲದಿಂದ</verse>
				<verse number="18">ಗಿಬ್ಯೋನ್, ಗೆಬ, ಗೆನತೋತ್, ಅಲ್ಮೋನ್ ಎಂಬ ನಾಲ್ಕು ಗೋಮಾಳ ಸಹಿತವಾದ ನಗರಗಳು ದೊರೆತವು.</verse>
				<verse number="19">ಯಾಜಕನಾದ ಆರೋನನ ವಂಶದವರ ಪಾಲಿಗೆ ಬಂದಂಥ ಗೋಮಾಳ ಸಹಿತವಾದ ನಗರಗಳು ಹದಿಮೂರು.</verse>
				<verse number="20">ಲೇವಿಯರಾದ ಕೆಹಾತ್ಯರ ಉಳಿದ ಕುಟುಂಬಗಳಿಗೆ</verse>
				<verse number="21">ಎಫ್ರಯಿಮ್ ಸೊತ್ತಿನಿಂದ ಬೆಟ್ಟದಲ್ಲಿರುವ ಶೆಕೆಮೆಂಬ ಆಶ್ರಯ ನಗರ,</verse>
				<verse number="22">ಗೆಜೆರ್, ಕಿದ್ ಚೈಮ್ ಹಾಗೂ ಬೇತ್ ಹೋರೋನ್ ಎಂಬ ಗೋಮಾಳಸಹಿತವಾದ ನಾಲ್ಕು ನಗರಗಳು,</verse>
				<verse number="23">ದಾನ್ಯರ ಸೊತ್ತಿನಿಂದ ಎಲ್ಲೆಕೇ, ಗಿಬ್ಬೆತೋನ್,</verse>
				<verse number="24">ಅಯ್ಯಾಲೋನ್, ಗತ್ ರಿಮ್ಮೋನ್ ಎಂಬ ಗೋಮಾಳಸಹಿತವಾದ ನಾಲ್ಕು ಪಟ್ಟಣಗಳು,</verse>
				<verse number="25">ಮನಸ್ಸೆಕುಲದ ಅರ್ಧಜನರ ಸೊತ್ತಿನಿಂದ ತಾನಾಕ್, ಗತ್ ರಿಮ್ಮೋನ್ ಎಂಬ ಎರಡು ಗೋಮಾಳಸಹಿತವಾದ ನಗರಗಳು ಚೀಟಿನಿಂದ ದೊರಕಿದವು.</verse>
				<verse number="26">ಒಟ್ಟಾರೆ ಕೆಹಾತ್ಯರಿಗೆ ಸಿಕ್ಕಿದಂಥ ಗೋಮಾಳ ಸಹಿತವಾದ ನಗರಗಳು ಹತ್ತು.</verse>
				<verse number="27">ಗೇರ್ಷೋನ್ಯರ ಕುಟುಂಬ಼ಗಳಿಗೆ ಅರ್ಧ ಮನಸ್ಸೆಯವರ ಸೊತ್ತಿನಿಂದ ದೊರಕಿದವುಗಳು ಇವು: ಕೊಲೆ ಮಾಡಿದವನಿಗೆ ಆಶ್ರಯನಗರವಾದ ಬಾಷಾನಿನ ಗೋಲಾನ್, ಬೆಯೆಷ್ಟೆರಾ ಎಂಬ ಗೋಮಾಳ ಸಹಿತವಾದ ಎರಡು ನಗರಗಳು;</verse>
				<verse number="28">ಇಸ್ಸಾಕಾರ್ ಸೊತ್ತಿನಿಂದ ಕಿಷ್ಯೋನ್, ದಾಬೆರತ್</verse>
				<verse number="29">ಯರ್ಮೂತ್, ಎಂಗನ್ನೀಮ್ ಎಂಬ ನಾಲ್ಕು ಗೋಮಾಳ ಸಹಿತವಾದ ನಗರಗಳು;</verse>
				<verse number="30">ಆಶೇರ್ ಕುಲದಿಂದ ಮಿಶಾಲ್, ಅಬ್ದೋನ್,</verse>
				<verse number="31">ಹೆಲ್ಕಾತ್, ರೆಹೋಬ್‍ ಎಂಬ ನಾಲ್ಕು ಗೋಮಾಳ ಸಹಿತವಾದ ನಗರಗಳು;</verse>
				<verse number="32">ನಫ್ತಾಲಿ ಸೊತ್ತಿನಿಂದ ಕೊಲೆಮಾಡಿದವನಿಗೆ ಆಶ್ರಯನಗರವಾದ ಗಲಿಲೇಯದ ಕೆದೆಷ್, ಹಮ್ಮೋತ್ ದೋರ್, ಕರ್ತಾನ್ ಎಂಬ ಗೋಮಾಳ ಸಹಿತವಾದ ಮೂರು ನಗರಗಳು.</verse>
				<verse number="33">ಹೀಗೆ ಗೇರ್ಷೋನ್ಯರಿಗೆ ಸಿಕ್ಕಿದ ಗೋಮಾಳ ಸಹಿತವಾದ ಒಟ್ಟು ನಗರಗಳು ಹದಿಮೂರು.</verse>
				<verse number="34">ಮಿಕ್ಕ ಲೇವಿಯರಾದ ಮೆರಾರೀ ಗೋತ್ರದವರಿಗೆ ಜೆಬುಲೂನ್ ಸೊತ್ತಿನಿಂದ ಯೊಕ್ನೆಯಾಮ್, ಕರ್ತಾ,</verse>
				<verse number="35">ದಿಮ್ನಾ ಹಾಗೂ ನಹಲಾಲ್ ಎಂಬ ಗೋಮಾಳ ಸಹಿತವಾದ ನಾಲ್ಕು ನಗರಗಳು;</verse>
				<verse number="36">ರೂಬೇನ್ಯರ ಸೊತ್ತಿನಿಂದ ಬೆಚೆರ್, ಯಹಚಾ,</verse>
				<verse number="37">ಕೆದೇಮೋತ್ ಹಾಗೂ ಮೇಫಾಗತ್ ಎಂಬ ಗೋಮಾಳ ಸಹಿತವಾದ ನಾಲ್ಕು ನಗರಗಳು;</verse>
				<verse number="38">ಗಾದ್ಯರ ಸೊತ್ತಿನಿಂದ ಕೊಲೆಮಾಡಿದವನಿಗೆ ಆಶ್ರಯ ನಗರವಾಗಿರುವ ಗಿಲ್ಯಾದಿನ ರಾಮೋತ್, ಮಹನಯಿಮ್,</verse>
				<verse number="39">ಹೆಷ್ಬೋನ್ ಹಾಗೂ ಯಗ್ಜೇರ್ ಎಂಬ ಗೋಮಾಳ ಸಹಿತವಾದ ನಾಲ್ಕು ನಗರಗಳು ಸಿಕ್ಕಿದವು.</verse>
				<verse number="40">ಮಿಕ್ಕ ಲೇವಿಯರಾದ ಮೆರಾರೀ ಗೋತ್ರಗಳಿಗೆ ಚೀಟಿನಿಂದ ಹೀಗೆ ದೊರೆತ ನಗರಗಳು ಒಟ್ಟು ಹನ್ನೆರಡು.</verse>
				<verse number="41">ಲೇವಿಯರಿಗೆ ಇಸ್ರಯೇಲರ ನಡುವೆ ದೊರಕಿದ ಗೋಮಾಳ ಸಹಿತವಾದ ನಗರಗಳು ಒಟ್ಟು ನಾಲ್ವತ್ತೆಂಟು.</verse>
				<verse number="42">ಈ ನಗರಗಳಲ್ಲಿ ಪ್ರತಿ ಒಂದಕ್ಕೂ ಗೋಮಾಳವಿರುತ್ತದೆ. ಎಲ್ಲ ನಗರಗಳಲ್ಲೂ ಹೀಗೆಯೇ ಇದೆ.</verse>
				<verse number="43">ಸರ್ವೇಶ್ವರಸ್ವಾಮಿ ಇಸ್ರಯೇಲರ ಪೂರ್ವಜರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ನಾಡನ್ನು ಹೀಗೆ ಅವರಿಗೆ ಕೊಟ್ಟರು. ಇಸ್ರಯೇಲರು ಅದನ್ನು ವಶಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.</verse>
				<verse number="44">ಸರ್ವೇಶ್ವರ ಅವರ ಪೂರ್ವಜರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲೆಡೆಯಲ್ಲೂ ಶಾಂತಿಸಮಾಧಾನವನ್ನು ಅನುಗ್ರಹಿಸಿದರು. ಶತ್ರುಗಳಾರು ಅವರನ್ನು ಪ್ರತಿಭಟಿಸಿ ನಿಲ್ಲಲಿಲ್ಲ. ಎಲ್ಲರೂ ಅವರ ಕೈವಶವಾದರು.</verse>
				<verse number="45">ಸರ್ವೇಶ್ವರ ಇಸ್ರಯೇಲರಿಗೆ ಮಾಡಿದ ಅತ್ಯುನ್ನತ ವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ. ಎಲ್ಲವೂ ನೆರವೇರಿದವು.</verse>
			</chapter>
			<chapter number="22">
				<verse number="1">ಯೆಹೋಶುವನು ರೂಬೇನ್ಯರನ್ನು, ಗಾದ್ಯರನ್ನು ಹಾಗೂ ಮನಸ್ಸೆಕುಲದ ಅರ್ಧಜನರನ್ನು ಕರೆಸಿ ಅವರಿಗೆ,</verse>
				<verse number="2">“ನೀವು ಸರ್ವೇಶ್ವರನ ದಾಸನಾದ ಮೋಶೆಯು ವಿಧಿಸಿದ್ದ ಎಲ್ಲವನ್ನು ಕೈಗೊಂಡಿದ್ದೀರಿ. ನಾನು ಆಜ್ಞಾಪಿಸಿದ್ದನ್ನು ನೆರವೇರಿಸಿದಿರಿ.</verse>
				<verse number="3">ಈ ಕಾಲವೆಲ್ಲ ನೀವು ನಿಮ್ಮ ಸಹೋದರರನ್ನು ಕೈಬಿಡಲಿಲ್ಲ.</verse>
				<verse number="4">ಅವರು ತಮ್ಮ ವಾಗ್ದಾನಕ್ಕನುಸಾರ ನಿಮ್ಮ ಸಹೋದರರಿಗೆ ಈಗ ನೆಮ್ಮದಿಯನ್ನು ದಯಪಾಲಿಸಿದ್ದಾರೆ. ಆದುದರಿಂದ ಸರ್ವೇಶ್ವರನ ದಾಸನಾದ ಮೋಶೆ ಜೋರ್ಡನಿನ ಆಚೆಕಡೆ ನಿಮಗೆ ಕೊಟ್ಟ ಆಸ್ತಿಯನ್ನು ಅನುಭವಿಸುತ್ತಿರುವ ನಿಮ್ಮ ನಿಮ್ಮ ನಿವಾಸಿಗಳ ಬಳಿಗೆ ನೀವು ಹೋಗಬಹುದು.</verse>
				<verse number="5">ಆದರೆ ಸರ್ವೇಶ್ವರನ ದಾಸ ಮೋಶೆಯು ನಿಮಗೆ ಕೊಟ್ಟ ಧರ್ಮಶಾಸ್ತ್ರವನ್ನೂ ವಿಧಿಗಳನ್ನೂ ಜಾಗರೂಕತೆಯಿಂದ ಕೈಗೊಳ್ಳಿರಿ; ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರೀತಿಸಿ ಅವರ ಮಾರ್ಗದಲ್ಲಿ ನಡೆಯಿರಿ; ಅವರ ಆಜ್ಞೆಗಳನ್ನು ಕೈಗೊಂಡು ಅವರನ್ನೇ ನೆಚ್ಚಿಕೊಂಡು ಪೂರ್ಣ ಮನಸ್ಸಿನಿಂದಲೂ ಪೂರ್ಣ ಪ್ರಾಣದಿಂದಲೂ ಅವರಿಗೆ ಸೇವೆ ಸಲ್ಲಿಸಿರಿ,” ಎಂದು ಹೇಳಿದನು.</verse>
				<verse number="6">ಇದಲ್ಲದೆ ಅವರನ್ನು ಆಶೀರ್ವದಿಸಿ ಕಳಿಸಿದನು. ಅವರು ತಮ್ಮ ತಮ್ಮ ನಿವಾಸಗಳಿಗೆ ಹೋದರು.</verse>
				<verse number="7">(ಮೋಶೆ ಮನಸ್ಸೆಕುಲದ ಅರ್ಧಜನರಿಗೆ ಬಾಷಾನಿನಲ್ಲಿ ಪಾಲನ್ನು ಕೊಟ್ಟಿದ್ದನು. ಉಳಿದ ಅರ್ಧಜನರಿಗೆ ಯೆಹೋಶುವನು ಜೋರ್ಡನಿನ ಪಶ್ಚಿಮದಲ್ಲಿ ಬೇರೆ ಕುಲದವರೊಂದಿಗೆ ಪಾಲುಕೊಟ್ಟಿದ್ದನು). ಯೆಹೋಶುವ ಅವರನ್ನು ಹೀಗೆ ಆಶೀರ್ವದಿಸಿ ತಮ್ಮ ಸ್ವಂತ ಸ್ಥಳಗಳಿಗೆ ಕಳಿಸುವಾಗ ಅವರಿಗೆ,</verse>
				<verse number="8">“ನೀವು ಬಹಳ ಆಸ್ತಿಯುಳ್ಳವರಾಗಿ ದನಕರು, ಬೆಳ್ಳಿಬಂಗಾರ, ಕಂಚು ಕಬ್ಬಿಣ, ವಸ್ತ್ರ ಮೊದಲಾದ ವಸ್ತುಗಳನ್ನು ತೆಗೆದುಕೊಂಡು ನಿಮ್ಮ ನಿಮ್ಮ ನಿವಾಸಗಳಿಗೆ ತೆರಳಿರಿ. ನೀವು ಶತ್ರುಗಳಿಂದ ಪಡೆದ ಕೊಳ್ಳೆಯಲ್ಲಿ ನಿಮ್ಮ ಸಹೋದರರಿಗೂ ಪಾಲುಕೊಡಿ,” ಎಂದನು.</verse>
				<verse number="9">ಆಗ ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಕುಲದ ಅರ್ಧಜನರು ಕಾನಾನ್ ನಾಡಿನ ಶಿಲೋವಿನಲ್ಲಿದ್ದ ಇಸ್ರಯೇಲರನ್ನು ಬಿಟ್ಟು ಸರ್ವೇಶ್ವರನ ಆಜ್ಞೆಗನುಸಾರ ಮೋಶೆಯಿಂದ ತಮಗೆ ದೊರಕಿದ ಸೊತ್ತಾದ ಗಿಲ್ಯಾದ್ ನಾಡಿಗೆ ಹೋದರು.</verse>
				<verse number="10">ರೂಬೇನ್ಯರು, ಗಾದ್ಯರು ಹಾಗೂ ಮನಸ್ಸೆಕುಲದ ಅರ್ಧಜನರು ಕಾನಾನ್ ನಾಡಿನಲ್ಲಿರುವ ಜೋರ್ಡನ್ ತೀರಪ್ರದೇಶಕ್ಕೆ ಬಂದಾಗ ಅಲ್ಲಿ ಒಂದು ಮಹಾಬಲಿಪೀಠವನ್ನು ಕಟ್ಟಿದರು.</verse>
				<verse number="11">ರೂಬೇನ್ಯರು, ಗಾದ್ಯರು ಹಾಗು ಮನಸ್ಸೆಕುಲದ ಅರ್ಧಜನರು ಇಸ್ರಯೇಲ್ ನಾಡಾದ ಕಾನಾನಿನ ಪೂರ್ವಕ್ಕಿರುವ ಜೋರ್ಡನ್ ನದಿಯ ತೀರಪ್ರದೇಶದಲ್ಲಿ ಬಲಿಪೀಠವನ್ನು ಕಟ್ಟಿದ್ದಾರೆಂಬ ಸುದ್ದಿ ಮಿಕ್ಕ ಇಸ್ರಯೇಲರಿಗೆ ಮುಟ್ಟಿತು.</verse>
				<verse number="12">ಅವರೆಲ್ಲರು ಶಿಲೋವಿನಲ್ಲಿ ಕೂಡಿಬಂದು ಬಲಿಪೀಠಸ್ಥಾಪಕರ ವಿರುದ್ಧ ಯುದ್ಧಕ್ಕೆ ಹೋರಾಡಲು ಸಿದ್ಧರಾದರು.</verse>
				<verse number="13">ಅದಕ್ಕೆ ಮೊದಲು ಗಿಲ್ಯಾದಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಕುಲದ ಅರ್ಧಜನರ ಬಳಿಗೆ ಯಾಜಕ ಎಲ್ಲಾಜಾರನ ಮಗ ಫೀನೆಹಾಸನನ್ನು</verse>
				<verse number="14">ಮತ್ತು ಕುಲಕ್ಕೆ ಒಬ್ಬನಂತೆ ಹತ್ತುಮಂದಿ ನಾಯಕರನ್ನೂ ಕಳಿಸಿದರು. ಇವರಲ್ಲಿ ಪ್ರತಿಯೊಬ್ಬನು ತನ್ನ ತನ್ನ ಕುಲಗೋತ್ರ-ಕುಟುಂಬಗಳಲ್ಲಿ ಮುಖ್ಯಸ್ಥನಾಗಿದ್ದನು.</verse>
				<verse number="15">ಇವರು ಗಿಲ್ಯಾದಿನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಕುಲದ ಅರ್ಧಜನರ ಬಳಿಗೆ ಬಂದು,</verse>
				<verse number="16">“ಸರ್ವೇಶ್ವರನ ಸರ್ವಸಭೆ ಹೇಳುವ ಮಾತಿದು: ನೀವು ಇಸ್ರಯೇಲ್ ದೇವರಿಗೆ ವಿರುದ್ಧ ಇಂಥ ದ್ರೋಹ ಮಾಡಿದ್ದೇಕೆ? ನೀವು ನಿಮಗಾಗಿಯೇ ಒಂದು ಬಲಿಪೀಠವನ್ನು ಕಟ್ಟಿಕೊಂಡಿದ್ದೀರಿ. ಇದರಿಂದ ನೀವು ಸರ್ವೇಶ್ವರನಿಗೆ ವಿಮುಖವಾದಂತಾಯಿತು; ನೀವು ಇಂದು ಸರ್ವೇಶ್ವರನಿಗೆ ವಿರುದ್ಧ ತಿರುಗಿಬಿದ್ದಂತಾಯಿತು.</verse>
				<verse number="17">ನಾವು ಪೆಗೋರದಲ್ಲಿ ಅಪರಾಧಿಗಳಾದದ್ದು ಸಾಕಾಗಲಿಲ್ಲವೆ? ಅದರ ನಿಮಿತ್ತ ಸರ್ವೇಶ್ವರನ ಸಭೆಗೇ ಜಾಡ್ಯ ತಗಲಿತು. ಆದ್ದರಿಂದ ನಾವು ಇಂದಿಗೂ ಶುದ್ಧರಾಗಲಿಲ್ಲ.</verse>
				<verse number="18">ಇಂತಿರುವಲ್ಲಿ ನೀವು ಮತ್ತೆ ಸರ್ವೇಶ್ವರನನ್ನು ಬಿಟ್ಟುಬಿಡುತ್ತೀರೋ? ನೀವು ಇಂದು ಸರ್ವೇಶ್ವರನಿಗೆ ವಿರುದ್ಧ ತಿರುಗಿಬಿದ್ದರೆ ನಾಳೆಯೇ ಅವರ ಕೋಪಾಗ್ನಿ ಇಸ್ರಯೇಲ್ ಸರ್ವಸಭೆಯ ಮೇಲೆ ಉರಿಯತೊಡಗುವುದು.</verse>
				<verse number="19">ನಿಮ್ಮ ನಾಡು ಅಶುದ್ಧವಾಗಿದೆಯೆಂದು ತೋರಿದರೆ ಸರ್ವೇಶ್ವರನ ಗುಡಾರವಿರುವ ಅವರ ಸ್ವಂತ ನಾಡಿಗೆ ಬಂದು ನಮ್ಮ ಮಧ್ಯೆಯಿರುವ ಸೊತ್ತನ್ನು ತೆಗೆದುಕೊಳ್ಳಿ. ನಮ್ಮ ದೇವರಾದ ಸರ್ವೇಶ್ವರನ ಬಲಿಪೀಠ ಒಂದನ್ನು ಬಿಟ್ಟು ನಿಮಗಾಗಿ ಇನ್ನೊಂದನ್ನು ಕಟ್ಟಿಕೊಂಡು ಸರ್ವೇಶ್ವರನಿಗೂ ನಮಗೂ ವಿರುದ್ಧ ತಿರುಗಿಬೀಳಬೇಡಿ.</verse>
				<verse number="20">ಜೆರಹನ ಮಗ ಆಕಾನನು ಸರ್ವೇಶ್ವರನ ಸೊತ್ತನ್ನು ಕದ್ದುಕೊಂಡು ದ್ರೋಹಿಯಾದ. ಆಗ ಸರ್ವೇಶ್ವರನ ಕೋಪ ಇಸ್ರಯೇಲರ ಸರ್ವಸಭೆಯ ಮೇಲೆ ಎರಗಿತು. ಅವನ ಪಾಪದ ನಿಮಿತ್ತ ಅವನೊಡನೆ ಅನೇಕರು ಸಾಯಬೇಕಾಯಿತಲ್ಲವೆ?” ಎಂದು ಹೇಳಿದರು.</verse>
				<verse number="21">ಆಗ ರೂಬೇನ್ಯರು, ಗಾದ್ಯರು ಹಾಗು ಮನಸ್ಸೆಕುಲದ ಅರ್ಧಜನರು, ಇಸ್ರಯೇಲಿನ ಆ ಕುಲಾಧಿಪತಿಗಳಿಗೆ ಹೀಗೆಂದು ಉತ್ತರಿಸಿದರು:</verse>
				<verse number="22">“ದೇವಾಧಿದೇವರಾದ ಸರ್ವೇಶ್ವರ ಇದಕ್ಕೆ ಸಾಕ್ಷಿ; ಆ ದೇವಾಧಿದೇವ ಸರ್ವೇಶ್ವರಸ್ವಾಮಿಗೆ ಇದು ಗೊತ್ತಿದೆ. ಇಸ್ರಯೇಲರಿಗೂ ಗೊತ್ತಾಗುವುದು. ನಾವು ದ್ರೋಹಿಗಳು, ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದವರು ಆಗಿದ್ದರೆ ಆ ಸ್ವಾಮಿ ನಮ್ಮನ್ನು ಇಂದೇ ಜೀವದಿಂದುಳಿಸದಿರಲಿ.</verse>
				<verse number="23">ನಾವು ಸರ್ವೇಶ್ವರನಿಂದ ವಿಮುಖರಾಗಿ ದಹನಬಲಿಯನ್ನಾಗಲಿ, ಸಮಾಧಾನ ಬಲಿಯನ್ನಾಗಲಿ, ಧಾನ್ಯನೈವೇದ್ಯವನ್ನಾಗಲಿ ಸಮರ್ಪಿಸುವುದಕ್ಕಾಗಿ ಈ ಬಲಿಪೀಠವನ್ನು ಕಟ್ಟಿದ್ದರೆ ಸರ್ವೇಶ್ವರನೇ ನಮ್ಮನ್ನು ಶಿಕ್ಷಿಸಲಿ.</verse>
				<verse number="24">ನಾವು ಇದನ್ನು ಕಟ್ಟಿದ್ದು ಒಂದು ವಿಶೇಷ ಉದ್ದೇಶಕ್ಕಾಗಿ; ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಇಸ್ರಯೇಲಿನ ದೇವರಾದ ಸರ್ವೇಶ್ವರನಲ್ಲಿ ನಿಮಗೇನು ಪಾಲಿದೆ?’</verse>
				<verse number="25">ರೂಬೇನ್ಯರೇ, ಗಾದ್ಯರೇ, ಸರ್ವೇಶ್ವರ ನಿಮಗೂ ನಮಗೂ ನಡುವೆ ಈ ಜೋರ್ಡನ್ ನದಿಯನ್ನು ಸರಹದ್ದಾಗಿ ಇಟ್ಟಿದ್ದಾರೆ. ಸರ್ವೇಶ್ವರನಲ್ಲಿ ನಿಮಗೆ ಯಾವ ಪಾಲೂ ಇಲ್ಲ, ಎಂದು ಹೇಳಿ ನಿಮ್ಮ ಮಕ್ಕಳು ನಮ್ಮ ಮಕ್ಕಳನ್ನು ದೇವಭಕ್ತಿಯಿಂದ ಬೇರ್ಪಡಿಸಿಯಾರೆಂದು ಭಯಪಟ್ಟೆವು.</verse>
				<verse number="26">ಈ ಕಾರಣದಿಂದಲೇ, ‘ಬನ್ನಿ, ಒಂದು ಬಲಿಪೀಠವನ್ನು ಕಟ್ಟೋಣ, ಅದು ದಹನಬಲಿ ಅಥವಾ ಬೇರೆ ಬಲಿಗಳನ್ನು ಸಮರ್ಪಿಸುವುದಕ್ಕಲ್ಲ,</verse>
				<verse number="27">ಆದರೆ ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿ, ಸಮರ್ಪಣಬಲಿ, ಶಾಂತಿಸಮಾಧಾನದ ಬಲಿ ಮುಂತಾದುವುಗಳನ್ನು ಅರ್ಪಿಸಿ ಆರಾಧಿಸುವುದಕ್ಕೆ ನಿಮಗೆ ಹಕ್ಕು ಉಂಟೆಂಬುದಕ್ಕೆ ಇದು ಗುರುತಾಗಿರಲಿ. ನಮಗೂ ನಿಮಗೂ ನಮ್ಮ ಸಂತಾನಕ್ಕೂ ನಿಮ್ಮ ಸಂತಾನಕ್ಕೂ ಇದು ಸಾಕ್ಷಿಯಾಗಿರಲಿ.’ ಇದರಿಂದ ಮುಂದೆ ನಿಮ್ಮ ಮಕ್ಕಳು ನಮ್ಮ ಮಕ್ಕಳಿಗೆ, ‘ಸರ್ವೇಶ್ವರನಲ್ಲಿ ನಿಮಗೆ ಪಾಲಿಲ್ಲ’ ಎಂದು ಹೇಳುವುದಕ್ಕೆ ಆಸ್ಪದವಿರದು.</verse>
				<verse number="28">ಒಂದು ವೇಳೆ ಅವರು ಮುಂದೆ ನಮಗಾಗಲಿ, ನಮ್ಮ ಸಂತಾನದವರಿಗಾಗಲಿ ಈ ಪ್ರಕಾರ ಹೇಳಿದ್ದೇ ಆದರೆ ನಾವು ಅವರಿಗೆ ‘ಸರ್ವೇಶ್ವರನ ಬಲಿಪೀಠವನ್ನು ಹೋಲುವ ಈ ವೇದಿಕೆಯನ್ನು ನೋಡಿ: ನಮ್ಮ ಪೂರ್ವಜರು ಇದನ್ನು ದಹನಬಲಿ, ಸಮರ್ಪಣ ಬಲಿಗಳನ್ನು ಅರ್ಪಿಸುವುದಕ್ಕಾಗಿ ಕಟ್ಟಲಿಲ್ಲ; ಇದು ನಮಗೂ ನಿಮಗೂ ಮಧ್ಯೆ ಸಾಕ್ಷಿಯಾಗಿದೆಯಷ್ಟೆ,’ ಎಂದು ಹೇಳುವೆವು.</verse>
				<verse number="29">ನಮ್ಮ ದೇವರಾದ ಸರ್ವೇಶ್ವರನ ಗುಡಾರದ ಮುಂದಿರುವ ಬಲಿಪೀಠದ ಹೊರತು ದಹನಬಲಿ, ಧಾನ್ಯನೈವೇದ್ಯ, ಸಮಾಧಾನಬಲಿ ಮೊದಲಾದವುಗಳನ್ನು ಸಮರ್ಪಿಸಲು ಬೇರೊಂದು ಬಲಿಪೀಠವನ್ನು ಕಟ್ಟಿ ಸರ್ವೇಶ್ವರನಿಗೆ ವಿಮುಖರಾಗಿ ದ್ರೋಹಿಗಳಾಗುವುದು ನಮಗೆ ದೂರ ಆಗಿರಲಿ,” ಎಂದರು.</verse>
				<verse number="30">ಯಾಜಕ ಫೀನೆಹಾಸನು ಮತ್ತು ಅವನ ಜೊತೆಯಲ್ಲಿ ಬಂದಿದ್ದ ಕುಲಾಧಿಪತಿಗಳು, ಇಸ್ರಯೇಲಿನ ಮುಖ್ಯಸ್ಥರು ರೂಬೇನ್, ಗಾದ್ ಹಾಗೂ ಮನಸ್ಸೆಕುಲಗಳವರ ಈ ಮಾತುಗಳನ್ನು ಕೇಳಿ ಸಂತೋಷಪಟ್ಟರು.</verse>
				<verse number="31">ಯಾಜಕ ಎಲ್ಲಾಜಾರನ ಮಗ ಫೀನೆಹಾಸನು ರೂಬೇನ್, ಗಾದ್, ಮನಸ್ಸೆ ಕುಲಗಳವರಿಗೆ, “ಸರ್ವೇಶ್ವರ ನಿಮ್ಮ ಮಧ್ಯೆ ಇರುತ್ತಾರೆಂದು ಈಗ ಅರಿವಾಯಿತು. ನೀವು ಸರ್ವೇಶ್ವರಸ್ವಾಮಿಗೆ ವಿರುದ್ಧ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಇಸ್ರಯೇಲರನ್ನು ಆತನ ಶಿಕ್ಷಾಹಸ್ತದಿಂದ ತಪ್ಪಿಸಿದಿರಿ,” ಎಂದನು.</verse>
				<verse number="32">ಯಾಜಕ ಎಲ್ಲಾಜಾರನ ಮಗ ಫೀನೆಹಾಸನು ಮತ್ತು ಮುಖ್ಯಸ್ಥರು ಗಿಲ್ಯಾದ್ ನಾಡಿನಲ್ಲಿದ್ದ ರೂಬೇನ್ಯರನ್ನು ಹಾಗೂ ಗಾದ್ಯರನ್ನು ಬೀಳ್ಕೊಟ್ಟು ಕಾನಾನ್ ನಾಡಿನಲ್ಲಿದ್ದ ಇಸ್ರಯೇಲರ ಬಳಿಗೆ ಬಂದು ಅವರಿಗೆ ಈ ಸಮಾಚಾರವನ್ನು ತಿಳಿಸಿದರು.</verse>
				<verse number="33">ಅವರು ಕೂಡ ಬಹಳ ಸಂತೋಷಪಟ್ಟು ದೇವರಿಗೆ ಧನ್ಯವಾದ ಸಲ್ಲಿಸಿದರು. ರೂಬೇನ್ ಹಾಗೂ ಗಾದ್ ಕುಲಗಳೊಡನೆ ಯುದ್ಧಮಾಡಿ ಅವರ ನಾಡನ್ನು ಹಾಳುಮಾಡಬೇಕೆಂಬ ಆಲೋಚನೆಯನ್ನು ತೊರೆದುಬಿಟ್ಟರು.</verse>
				<verse number="34">ರೂಬೇನ್ಯರು ಹಾಗೂ ಗಾದ್ಯರು ‘ಸರ್ವೇಶ್ವರನೇ ದೇವರು’ ಎಂಬುದಕ್ಕೆ ಈ ಬಲಿಪೀಠವೇ ಸಾಕ್ಷಿ ಎಂದು ಹೇಳಿ ಅದಕ್ಕೆ ‘ಏದ್’ ಎಂದು ಹೆಸರಿಟ್ಟರು.</verse>
			</chapter>
			<chapter number="23">
				<verse number="1">ಸರ್ವೇಶ್ವರಸ್ವಾಮಿ ಸುತ್ತಮುತ್ತಲಿನ ಶತ್ರುಗಳನ್ನು ನಿರ್ಮೂಲಮಾಡಿ ಇಸ್ರಯೇಲರಿಗೆ ನೆಮ್ಮದಿಯಿತ್ತರು. ಬಹಳ ದಿನಗಳಾದ ತರುವಾಯ ಯೆಹೋಶುವ ಹಣ್ಣುಹಣ್ಣು ಮುದುಕನಾದ.</verse>
				<verse number="2">ಆತ ಇಸ್ರಯೇಲರೆಲ್ಲರನ್ನು, ಅವರ ಹಿರಿಯರನ್ನು, ಮುಖ್ಯಸ್ಥರನ್ನು, ನ್ಯಾಯಾಧಿಪತಿಗಳನ್ನು ಹಾಗೂ ಅಧಿಕಾರಿಗಳನ್ನು ತನ್ನ ಬಳಿಗೆ ಕರೆಯಿಸಿದನು. ಅವರಿಗೆ, “ನಾನು ಮುಪ್ಪಿನ ಮುದುಕನಾದೆ.</verse>
				<verse number="3">ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪರವಾಗಿದ್ದು, ಈ ಜನಾಂಗಗಳಿಗೆ ಮಾಡಿದ್ದೆಲ್ಲವನ್ನು ನೀವು ಕಣ್ಣಾರೆ ನೋಡಿದ್ದೀರಿ. ಹೌದು, ನಿಮ್ಮ ಪರವಾಗಿ ಯುದ್ಧಮಾಡಿದಾತ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ.</verse>
				<verse number="4">ನೋಡಿ, ಜೋರ್ಡನಿನಿಂದ ಪಶ್ಚಿಮ ಮಹಾ ಸಮುದ್ರದವರೆಗೂ ಇರುವ ಜನಾಂಗಗಳಲ್ಲಿ ಸತ್ತವರ ಹಾಗೂ ಉಳಿದವರ ನಾಡನ್ನು ನಿಮಗೆ ಸೊತ್ತಾಗಿ ಕೊಟ್ಟಿದ್ದೇನೆ,</verse>
				<verse number="5">ನಿಮ್ಮ ದೇವರಾದ ಸರ್ವೇಶ್ವರ ತಾವೇ ಉಳಿದವರನ್ನು ನಿಮ್ಮ ಕಣ್ಮುಂದೆ ಹೊರಡಿಸಿಬಿಡುವರು. ಅವರ ವಾಗ್ದಾನದಂತೆ ಆ ಜನರ ನಾಡನ್ನು ನೀವು ವಶಪಡಿಸಿಕೊಳ್ಳುವಿರಿ.</verse>
				<verse number="6">ಮೋಶೆಯ ಧರ್ಮಶಾಸ್ತ್ರವನ್ನೂ ಎಲ್ಲಾ ವಿಧಿಗಳನ್ನೂ ಕೈಗೊಳ್ಳುವುದರಲ್ಲಿ ಸ್ಥಿರಚಿತ್ತದಿಂದಿರಿ. ಎಡಕ್ಕಾಗಲಿ ಬಲಕ್ಕಾಗಲಿ ಓರೆಯಾಗಬೇಡಿ.</verse>
				<verse number="7">ಉಳಿದಿರುವ ಈ ಜನಾಂಗಗಳ ಜೊತೆ ಸೇರಿಕೊಳ್ಳಬೇಡಿ. ಅವರ ದೇವತೆಗಳ ಹೆಸರು ಹೇಳಿ ಆರಾಧಿಸಬಾರದು, ಪ್ರಮಾಣ ಮಾಡಬಾರದು, ಅವುಗಳನ್ನು ಪೂಜಿಸಬಾರದು. ಅವುಗಳಿಗೆ ಸೇವೆ ಮಾಡಬಾರದು.</verse>
				<verse number="8">ಈವರೆಗೆ ಹೇಗೋ ಹಾಗೆಯೇ ಇನ್ನು ಮುಂದಕ್ಕೂ ನಿಮ್ಮ ದೇವರಾದ ಸರ್ವೇಶ್ವರನನ್ನೇ ಅಂಟಿಕೊಂಡಿರಿ.</verse>
				<verse number="9">ಸರ್ವೇಶ್ವರ ಮಹಾಪರಾಕ್ರಮಿಗಳಾದ ಜನಾಂಗಗಳನ್ನು ನಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾರೆ. ನಮ್ಮನ್ನು ಪ್ರತಿಭಟಿಸಿ ನಿಂತವನು ಒಬ್ಬನೂ ಇಲ್ಲ.</verse>
				<verse number="10">ನಿಮ್ಮ ದೇವರಾದ ಸರ್ವೇಶ್ವರ ತಮ್ಮ ವಾಗ್ದಾನದಂತೆ ನಿಮ್ಮ ಪರವಾಗಿ ಯುದ್ಧಮಾಡಿದರು. ಆದ್ದರಿಂದಲೇ ನಿಮ್ಮಲ್ಲಿ ಒಬ್ಬನು ಸಾವಿರ ಜನರನ್ನು ಓಡಿಸುವಷ್ಟು ಶಕ್ತನಾದ.</verse>
				<verse number="11">ಇಂತಿರಲು ಜಾಗರೂಕತೆಯಿಂದಿರಿ, ನಿಮ್ಮ ಪ್ರಾಣದಂತೆ ದೇವರಾದ ಸರ್ವೇಶ್ವರನನ್ನೇ ಪ್ರೀತಿಸಿರಿ.</verse>
				<verse number="12">ದೇವರಿಗೆ ವಿಮುಖರಾಗಿ, ನಿಮ್ಮ ಮಧ್ಯೆ ಉಳಿದಿರುವ ಈ ಜನಾಂಗಗಳೊಡನೆ ಕೊಟ್ಟು ತಂದು ಮಿಶ್ರವಾಗಬೇಡಿ.</verse>
				<verse number="13">ಮಿಶ್ರವಾದರೆ ನಿಮ್ಮ ದೇವರಾದ ಸರ್ವೇಶ್ವರ ಅವರನ್ನು ನಿಮ್ಮ ಮಧ್ಯೆಯಿಂದ ಹೊರಡಿಸುವುದೇ ಇಲ್ಲವೆಂಬುದು ನಿಮಗೆ ತಿಳಿದಿರಲಿ. ಆ ಜನರೇ ನಿಮಗೆ ಉರುಳೂ ಬೋನೂ ಆಗುವರು; ಪಕ್ಕೆಗೆ ಬಡಿಯುವ ಕೊರಡಾಗಿಯೂ ಇರಿಯುವ ಶೂಲವಾಗಿಯೂ ಕಣ್ಣಿಗೆ ಚುಚ್ಚುವ ಮುಳ್ಳಾಗಿಯೂ ಮಾರ್ಪಡುವರು. ಕಡೆಗೆ ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟ ಈ ಚೆಲುವ ನಾಡಲ್ಲಿ ನೀವೇ ಇಲ್ಲದಂತಾಗುವಿರಿ.</verse>
				<verse number="14">ಈಗ ನಾನು, ಭೂನಿವಾಸಿಗಳೆಲ್ಲರು ಹಿಡಿಯುವ ಹಾದಿಯನ್ನು ಹಿಡಿಯಬೆಕಾಗಿದೆ. ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿವೆ ಎಂಬುದು ನಿಮಗೆ ಮನದಟ್ಟಾಗಿರಲಿ.</verse>
				<verse number="15">ನಿಮ್ಮ ದೇವರಾದ ಸರ್ವೇಶ್ವರ ತಮ್ಮ ವಾಗ್ದಾನಕ್ಕನುಸಾರ ಈಗ ನಿಮಗೆ ಎಲ್ಲಾ ವಿಧದ ಒಳಿತನ್ನೂ ಅನುಗ್ರಹಿಸಿದಂತೆಯೇ ನಿಮ್ಮ ಮೇಲೆ ಎಲ್ಲಾ ತರದ ಕೇಡುಗಳನ್ನು ಬರಮಾಡಿ ತಾವು ಕೊಟ್ಟ ಈ ಚೆಲುವಾದ ನಾಡಿನಿಂದ ನಿಮ್ಮನ್ನು ನಿರ್ಮೂಲ ಮಾಡುವರು.</verse>
				<verse number="16">ದೇವರಾದ ಸರ್ವೇಶ್ವರನ ನಿಬಂಧನೆಯನ್ನು ನೀವು ಮೀರಿ ಅನ್ಯದೇವತೆಗಳಿಗೆ ಸೇವೆಸಲ್ಲಿಸಿ, ಅಡ್ಡಬಿದ್ದರೆ, ಸರ್ವೇಶ್ವರನ ಕೋಪಾಗ್ನಿ ನಿಮ್ಮ ಮೇಲೆ ಎರಗುವುದು; ಅವರು ನಿಮಗೆ ಕೊಟ್ಟ ಈ ಒಳ್ಳೆಯ ನಾಡಿನಿಂದ ಹೊರದೂಡಲ್ಪಟ್ಟು ಬೇಗನೆ ನಾಶವಾಗುವಿರಿ,” ಎಂದನು.</verse>
			</chapter>
			<chapter number="24">
				<verse number="1">ತರುವಾಯ ಯೆಹೋಶುವನು ಎಲ್ಲ ಇಸ್ರಯೇಲ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ನಾಯಕರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಉಪಸ್ಥಿತರಾದರು.</verse>
				<verse number="2">ಯೆಹೋಶುವ ಅವರೆಲ್ಲರನ್ನು ಉದ್ದೇಶಿಸಿ, “ನಿಮ್ಮ ದೇವರಾದ ಸರ್ವೇಶ್ವರಸ್ವಾಮಿ ಹೇಳುವುದನ್ನು ಗಮನಿಸಿರಿ: ‘ಅಬ್ರಹಾಮ್, ನಾಹೊರ್ ಎಂಬವರ ತಂದೆಯಾದ ತೆರಹ ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆ ಇದ್ದರು. ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.</verse>
				<verse number="3">ನಾನು ನಿಮ್ಮ ಪಿತೃವಾದ ಅಬ್ರಹಾಮನನ್ನು ಅಲ್ಲಿಂದ ಕರೆತಂದು, ಕಾನಾನ್ ನಾಡಿನಲ್ಲೆಲ್ಲಾ ಸಂಚಾರ ಮಾಡಿಸಿದೆ. ಇಸಾಕನೆಂಬ ಮಗನನ್ನು ಕೊಟ್ಟು, ಅವನ ಸಂತಾನವನ್ನು ಹೆಚ್ಚಿಸಿದೆ.</verse>
				<verse number="4">ಇಸಾಕನಿಗೆ ಯಕೋಬ್ ಮತ್ತು ಏಸಾವ್ ಎಂಬ ಇಬ್ಬರು ಮಕ್ಕಳನ್ನು ಅನುಗ್ರಹಿಸಿದೆ. ಏಸಾವನಿಗೆ ಸೇಯೀರ್ ಬೆಟ್ಟವನ್ನು ಸ್ವಂತ ಸೊತ್ತಾಗಿ ದಯಪಾಲಿಸಿದೆ. ಯಕೋಬನಾದರೋ ತನ್ನ ಮಕ್ಕಳ ಸಮೇತ ಈಜಿಪ್ಟ್ ದೇಶಕ್ಕೆ ಹೋದ.</verse>
				<verse number="5">ಬಳಿಕ ನಾನು ಮೋಶೆ ಹಾಗೂ ಆರೋನರನ್ನು ಕಳಿಸಿ, ಆ ಈಜಿಪ್ಟಿನಲ್ಲಿ ಅನೇಕ ಅದ್ಭುತಕಾರ್ಯಗಳನ್ನು ನಡೆಸಿ, ಆ ಜನರನ್ನು ಬಾಧಿಸಿ, ನಿಮ್ಮನ್ನು ಹೊರಗೆ ಕರೆತಂದೆ.</verse>
				<verse number="6">ನಿಮ್ಮ ಪೂರ್ವಜರು ಈಜಿಪ್ಟಿನಿಂದ ಬಿಡುಗಡೆಯಾಗಿ ಕೆಂಪುಸಮುದ್ರಕ್ಕೆ ಬರುತ್ತ ಇರುವಾಗ ಈಜಿಪ್ಟಿನವರು ರಥಾಶ್ವಬಲಗಳ ಸಹಿತ ಅವರನ್ನು ಆ ಸಮುದ್ರದವರೆಗೂ ಹಿಂದಟ್ಟಿ ಬಂದರು.</verse>
				<verse number="7">ಆಗ ನಿಮ್ಮ ಪೂರ್ವಜರು ನನಗೆ ಮೊರೆಯಿಟ್ಟರು. ನಾನು ಅವರಿಗೂ ಈಜಿಪ್ಟಿನವರಿಗೂ ಮಧ್ಯೆ ಕಾರ್ಗತ್ತಲೆಯನ್ನು ಉಂಟುಮಾಡಿದೆ. ಇದಲ್ಲದೆ ಈಜಿಪ್ಟಿನವರ ಮೇಲೆ ಸಮುದ್ರವನ್ನು ಬರಮಾಡಿ ಅವರನ್ನು ಮುಳುಗಿಸಿಬಿಟ್ಟೆ. ನಾನು ಈಜಿಪ್ಟಿನಲ್ಲಿ ಏನೇನು ಮಾಡಿದೆನೆಂಬುದಕ್ಕೆ ನೀವೇ ಸಾಕ್ಷಿಗಳು.</verse>
				<verse number="8">‘ನೀವು ದೀರ್ಘಕಾಲ ಮರುಭೂಮಿಯಲ್ಲಿದ್ದಿರಿ. ಅನಂತರ ನಿಮ್ಮನ್ನು ಜೋರ್ಡನಿನ ಆಚೆ ಅಮೋರಿಯರ ನಾಡಿಗೆ ಕರೆತಂದೆ. ನಿಮ್ಮೊಡನೆ ಯುದ್ಧಕ್ಕೆ ಬಂದ ಅವರನ್ನು ನಿಮ್ಮ ಕೈವಶಮಾಡಿದೆ. ನೀವು ಅವರ ನಾಡನ್ನು ಸ್ವತಂತ್ರಿಸಿಕೊಂಡಿರಿ. ಅವರನ್ನು ನಿಮ್ಮೆದುರಿನಲ್ಲೇ ನಾಶಮಾಡಿದೆ.</verse>
				<verse number="9">ಆಮೇಲೆ ಮೋವಾಬ್ಯರ ಅರಸನೂ ಚಿಪ್ಪೋರನ ಮಗನೂ ಆದ ಬಾಲಾಕನು ಇಸ್ರಯೇಲರಾದ ನಿಮ್ಮ ವಿರುದ್ಧ ಯುದ್ಧಮಾಡಲು ಎದ್ದ. ನಿಮ್ಮನ್ನು ಶಪಿಸಲು ಬೆಯೋರನ ಮಗ ಬಿಳಾಮನಿಗೆ ಕರೆ ಕಳುಹಿಸಿದ.</verse>
				<verse number="10">ಆದರೆ ನಾನು ಆ ಬಿಳಾಮನಿಗೆ ಸಮ್ಮತಿ ಕೊಡಲಿಲ್ಲವಾದ್ದರಿಂದ ಅವನು ನಿಮ್ಮನ್ನು ಆಶೀರ್ವದಿಸುತ್ತಲೇ ಇರಬೇಕಾಯಿತು. ಹೀಗೆ ನಿಮ್ಮನ್ನು ಅವನ ಕೈಗೆ ಬೀಳದಂತೆ ತಪ್ಪಿಸಿದೆ.</verse>
				<verse number="11">ನೀವು ಜೋರ್ಡನನ್ನು ದಾಟಿ ಜೆರಿಕೋವಿಗೆ ಬಂದಿರಿ. ಆಗ ಜೆರಿಕೋವಿನವರು, ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷ್ಟಿಯರು, ಹಿವ್ವಿಯರು ಹಾಗೂ ಯೆಬೂಸಿಯರು ಇವರೆಲ್ಲರೂ ನಿಮಗೆ ವಿರುದ್ಧ ಯುದ್ಧಕ್ಕೆ ಬಂದರು. ನಾನು ಅವರೆಲ್ಲರನ್ನು ನಿಮ್ಮ ಕೈವಶಮಾಡಿದೆ.</verse>
				<verse number="12">ಇದಲ್ಲದೆ ಕಣಜದ ಹುಳುಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆ. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿಬಿಲ್ಲುಗಳಿಂದ ಆದುದಲ್ಲ.</verse>
				<verse number="13">ನೀವು ಕೃಷಿಮಾಡದ, ಬೆಳೆ ತುಂಬಿದ ಭೂಮಿಯನ್ನು ನಿಮಗೆ ಕೊಟ್ಟೆ, ನೀವು ಕಟ್ಟದ ನಗರಗಳಲ್ಲಿ ವಾಸಮಾಡುತ್ತಿದ್ದೀರಿ. ನೀವು ನೆಟ್ಟು ಬೆಳೆಸದ ದ್ರಾಕ್ಷಿ ಹಾಗೂ ಎಣ್ಣೆಮರಗಳ ತೋಟಗಳನ್ನು ಅನುಭವಿಸುತ್ತಿದ್ದೀರಿ’.</verse>
				<verse number="14">“ಈ ಕಾರಣ ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿರಿ. ಪೂರ್ಣ ಮನಸ್ಸಿನಿಂದ ಯಥಾರ್ಥಚಿತ್ತದಿಂದ ಅವರಿಗೆ ಸೇವೆಸಲ್ಲಿಸಿರಿ. ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯಾಚೆಯಲ್ಲೂ ಈಜಿಪ್ಟಿನಲ್ಲೂ ಪೂಜಿಸುತ್ತಿದ್ದ ದೇವತೆಗಳನ್ನು ತೊರೆದುಬಿಡಿ.</verse>
				<verse number="15">ಸರ್ವೇಶ್ವರನಿಗೆ ಸೇವೆಸಲ್ಲಿಸಿರಿ. ನಿಮಗೆ ಇದು ಸರಿಕಾಣದಿದ್ದರೆ ಯಾರಿಗೆ ಸೇವೆಸಲ್ಲಿಸಬೇಕೆಂದಿದ್ದೀರಿ? ಇಂದೇ ಆರಿಸಿಕೊಳ್ಳಿ: ನಿಮ್ಮ ಪೂರ್ವಜರು ಯೂಫ್ರಟಿಸ್ ನದಿಯ ಆಚೆಯಲ್ಲಿ ಪೂಜಿಸುತ್ತಿದ್ದ ದೇವತೆಗಳಿಗೋ? ಈ ನಾಡಿನ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳಿಗೋ? ಹೇಳಿ. ನಾನು ಮತ್ತು ನನ್ನ ಮನೆಯವರು ಮಾತ್ರ ಸರ್ವೇಶ್ವರನಿಗೇ ಸೇವೆ ಸಲ್ಲಿಸುತ್ತೇವೆ,” ಎಂದನು.</verse>
				<verse number="16">ಅದಕ್ಕೆ ಜನರು, “ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳಿಗೆ ಸೇವೆಸಲ್ಲಿಸುವುದು ನಮ್ಮಿಂದ ದೂರವಿರಲಿ.</verse>
				<verse number="17">ನಾವು ದಾಸತ್ವದಲ್ಲಿದ್ದ ಈಜಿಪ್ಟಿನಿಂದ ನಮ್ಮನ್ನೂ ನಮ್ಮ ಪೂರ್ವಜರನ್ನೂ ಹೊರತಂದವರು ನಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ. ನಮ್ಮೆದುರಿನಲ್ಲೇ ಅವರು ಮಾಡಿದ ಅದ್ಭುತಕಾರ್ಯಗಳನ್ನು ನೋಡಿದ್ದೇವೆ. ನಮ್ಮ ಎಲ್ಲಾ ಪ್ರಯಾಣಗಳಲ್ಲೂ ನಾವು ದಾಟಿಬಂದ ಜನಾಂಗಗಳಿಂದ ನಮ್ಮನ್ನು ಕಾಪಾಡಿದವರು ಅವರೇ.</verse>
				<verse number="18">ಈ ನಾಡಿನ ನಿವಾಸಿಗಳಾಗಿದ್ದ ಅಮೋರಿಯರು ಮೊದಲಾದ ಎಲ್ಲಾ ಜನಾಂಗಗಳನ್ನು ಇಲ್ಲಿಂದ ಹೊರಡಿಸಿಬಿಟ್ಟವರು ಅವರೇ. ಆದುದರಿಂದ ನಾವು ಕೂಡ ಸರ್ವೇಶ್ವರನಿಗೆ ಸೇವೆಸಲ್ಲಿಸುತ್ತೇವೆ. ಅವರೇ ನಮ್ಮ ದೇವರು,” ಎಂದು ಉತ್ತರಕೊಟ್ಟರು.</verse>
				<verse number="19">ಆಗ ಯೆಹೋಶುವನು ಅವರಿಗೆ, “ನೀವು ಸರ್ವೇಶ್ವರನಿಗೆ ಸೇವೆಸಲ್ಲಿಸಲು ಶಕ್ತರಲ್ಲ. ಸರ್ವೇಶ್ವರಸ್ವಾಮಿ ಪರಿಶುದ್ಧರು; ತಮಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಅವರು ನಿಮ್ಮ ಪಾಪ, ಅಪರಾಧಗಳನ್ನು ಕ್ಷಮಿಸರು.</verse>
				<verse number="20">ನೀವು ಅವರನ್ನು ಬಿಟ್ಟು ಅನ್ಯದೇವತೆಗಳಿಗೆ ಸೇವೆಸಲ್ಲಿಸಿದರೆ ನಿಮಗೆ ವಿಮುಖರಾಗಿ, ಒಳಿತಿಗೆ ಬದಲಾಗಿ ಕೇಡನ್ನೇ ಬರಮಾಡಿ ನಿಮ್ಮನ್ನು ನಾಶಮಾಡಿಬಿಡುವರು,” ಎಂದನು.</verse>
				<verse number="21">ಜನರು ಯೆಹೋಶುವನಿಗೆ, “ಇಲ್ಲ, ನಾವು ಸರ್ವೇಶ್ವರಸ್ವಾಮಿಗೇ ಸೇವೆಸಲ್ಲಿಸುತ್ತೇವೆ,” ಎಂದರು.</verse>
				<verse number="22">ಯೆಹೋಶುವ ಅವರಿಗೆ, “ನೀವು ಸರ್ವೇಶ್ವರನಿಗೇ ಸೇವೆಸಲ್ಲಿಸುವುದನ್ನು ಆರಿಸಿಕೊಂಡಿರುವುದಕ್ಕೆ ನೀವೇ ಸಾಕ್ಷಿಗಳು,” ಎನ್ನಲು ಅವರು, “ಹೌದು, ನಾವೇ ಸಾಕ್ಷಿಗಳು,” ಎಂದು ಉತ್ತರಕೊಟ್ಟರು.</verse>
				<verse number="23">ಆಗ ಯೆಹೋಶುವ, “ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೊರೆದುಬಿಟ್ಟು ಇಸ್ರಯೇಲಿನ ದೇವರಾದ ಸರ್ವೇಶ್ವರನ ಕಡೆಗೆ ನಿಮ್ಮ ಹೃನ್ಮನಗಳನ್ನು ತಿರುಗಿಸಿಕೊಳ್ಳಿ,” ಎಂದನು.</verse>
				<verse number="24">ಅದಕ್ಕೆ ಜನರು, “ನಮ್ಮ ದೇವರಾದ ಸರ್ವೇಶ್ವರನಿಗೇ ಸೇವೆಸಲ್ಲಿಸುತ್ತೇವೆ. ಅವರ ಮಾತನ್ನೇ ಕೇಳುತ್ತೇವೆ,” ಎಂದರು.</verse>
				<verse number="25">ಹೀಗೆ ಯೆಹೋಶುವ ಶೆಕೆಮಿನಲ್ಲಿ ಇಸ್ರಯೇಲರೊಡನೆ ಒಪ್ಪಂದ ಮಾಡಿಕೊಂಡು ಅವರಿಗೆ ವಿಧಿನಿಯಮಗಳನ್ನು ನೇಮಿಸಿದನು.</verse>
				<verse number="26">ಇದು ಮಾತ್ರವಲ್ಲ, ಈ ಎಲ್ಲಾ ಮಾತುಕತೆಗಳನ್ನು ದೇವರ ಧರ್ಮಶಾಸ್ತ್ರಗ್ರಂಥದಲ್ಲಿ ಬರೆದಿಟ್ಟನು. ಒಂದು ದೊಡ್ಡ ಕಲ್ಲನ್ನು ಸರ್ವೇಶ್ವರನ ಆಲಯದ ಹತ್ತಿರದಲ್ಲೇ ಇದ್ದ ಓಕ್ ವೃಕ್ಷದ ಅಡಿಯಲ್ಲಿ ನಿಲ್ಲಿಸಿದನು.</verse>
				<verse number="27">ಬಳಿಕ ಎಲ್ಲಾ ಜನರಿಗೆ, “ಇಗೋ, ನೋಡಿ ಈ ಕಲ್ಲು! ಇದು ನಿಮ್ಮ ವಿಷಯದಲ್ಲಿ ಸಾಕ್ಷಿ ಹೇಳುವುದು. ಸರ್ವೇಶ್ವರ ನಮಗೆ ಹೇಳಿದ ಎಲ್ಲ ಮಾತುಗಳನ್ನು ಇದು ಕೇಳಿದೆ.</verse>
				<verse number="28">ಆದ್ದರಿಂದ ನೀವು ನಿಮ್ಮ ದೇವರಾದ ಅವರನ್ನು ಅಲ್ಲಗಳೆದದ್ದೇ ಆದರೆ ಈ ಕಲ್ಲೇ ನಿಮಗೆ ಸಾಕ್ಷಿಯಾಗಿರುವುದು,” ಎಂದು ಹೇಳಿ ಆ ಜನರನ್ನು ಅವರವರ ಸೊತ್ತಿದ್ದಲ್ಲಿಗೆ ಕಳುಹಿಸಿಬಿಟ್ಟನು.</verse>
				<verse number="29">ಇದಾದ ಮೇಲೆ ಸರ್ವೇಶ್ವರನ ದಾಸನಾದ ನೂನನ ಮಗ ಯೆಹೋಶುವನು ನೂರಹತ್ತು ವರ್ಷದವನಾಗಿ ಮರಣಹೊಂದಿದ.</verse>
				<verse number="30">ಆತನ ಕಳೇಬರವನ್ನು ಎಫ್ರಯಿಮ್ ಮಲೆನಾಡಿನಲ್ಲಿ ಗಾಷ್ ಬೆಟ್ಟದ ಉತ್ತರ ದಿಕ್ಕಿನಲ್ಲಿರುವ ತಿಮ್ನತ್ ಸೆರಹ ಎಂಬ ಅವರ ಸ್ವಂತ ಭೂಮಿಯಲ್ಲಿ ಸಮಾಧಿಮಾಡಿದರು.</verse>
				<verse number="31">ಯೆಹೋಶುವನ ದಿನಗಳಲ್ಲೂ ಅವನ ಕಾಲದಿಂದ ಇನ್ನೂ ಜೀವಿಸುತ್ತಿದ್ದ ಹಿರಿಯರ ದಿನಗಳಲ್ಲೂ ಇಸ್ರಯೇಲರು, ಸರ್ವೇಶ್ವರ ಇಸ್ರಯೇಲರ ಹಿತಕ್ಕಾಗಿ ನಡೆಸಿದ ಅದ್ಭುತಕಾರ್ಯಗಳಿಗೆ ಸಾಕ್ಷಿಗಳಾಗಿದ್ದರು.</verse>
				<verse number="32">ಇಸ್ರಯೇಲರು ಈಜಿಪ್ಟಿನಿಂದ ತಂದ ಜೋಸೆಫನ ಎಲುಬುಗಳನ್ನು ಶೆಕೆಮ್ ಊರಿನ ಹೊಲದಲ್ಲಿ ಹೂಳಿಟ್ಟರು. ಈ ಹೊಲವನ್ನು ಯಕೋಬನು ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ನೂರು ಬೆಳ್ಳಿನಾಣ್ಯ ಕೊಟ್ಟು ಕೊಂಡುಕೊಂಡಿದ್ದನು. ಅದು ಜೋಸೆಫ್ಯರ ಸೊತ್ತಾಗಿತ್ತು.</verse>
				<verse number="33">ಆರೋನನ ಮಗ ಎಲ್ಲಾಜಾರನೂ ಮರಣಹೊಂದಿದನು. ಅವನ ಶವವನ್ನು ಎಫ್ರಯಿಮ್ ಮಲೆನಾಡಿನಲ್ಲಿ ಅವನ ಮಗ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.</verse>
			</chapter>
		</book>
		<book number="7">
			<chapter number="1">
				<verse number="1">ಯೆಹೋಶುವನು ಮರಣಹೊಂದಿದ ಬಳಿಕ ಇಸ್ರಯೇಲರು ಕಾನಾನ್ಯರೊಡನೆ ಯುದ್ಧಮಾಡಲು ತಮ್ಮಲ್ಲಿ ಯಾವ ಕುಲ ಮುಂದಾಗಿ ಹೋಗಬೇಕೆಂದು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದರು.</verse>
				<verse number="2">“ಯೆಹೂದ ಕುಲ ಹೋಗಲಿ; ಇಗೋ, ನಾಡನ್ನು ಅವರ ಕೈಗೆ ಒಪ್ಪಿಸಿದ್ದೇನೆ,” ಎಂದರು ಸರ್ವೇಶ್ವರ.</verse>
				<verse number="3">ಆಗ ಯೆಹೂದಕುಲದವರು ತಮ್ಮ ಸೋದರರಾದ ಸಿಮೆಯೋನ್ಯರಿಗೆ, “ಕಾನಾನ್ಯರೊಡನೆ ಯುದ್ಧಮಾಡಲು ನೀವೂ ನಮ್ಮ ಸಂಗಡ ಸ್ವಂತಪ್ರಾಂತ್ಯಕ್ಕೆ ಬನ್ನಿ; ಅನಂತರ ನಾವೂ ನಿಮ್ಮ ಸಂಗಡ ನಿಮ್ಮ ಸ್ವಂತಪ್ರಾಂತ್ಯಕ್ಕೆ ಬರುತ್ತೇವೆ,” ಎಂದು ಹೇಳಿದರು.</verse>
				<verse number="4">ಅವರು ಒಪ್ಪಿ ಯೆಹೂದ ಕುಲದವರ ಜೊತೆ ಯುದ್ಧಕ್ಕೆ ಹೋದರು. ಸರ್ವೇಶ್ವರ ಕಾನಾನ್ಯರನ್ನು ಹಾಗು ಪೆರಿಜ್ಜೀಯರನ್ನು ಅವರ ಕೈವಶ ಮಾಡಲು ಅವರು ಹತ್ತುಸಾವಿರ ಶತ್ರುಗಳನ್ನು ಬೆಜೆಕಿನಲ್ಲಿ ಸೋಲಿಸಿದರು.</verse>
				<verse number="5">ಅದೋನೀಬೆಜೆಕನನ್ನು ಅಲ್ಲಿ ಎದುರುಗೊಂಡು ಯುದ್ಧಮಾಡಿ ಸೋಲಿಸಿದರು.</verse>
				<verse number="6">ಅದೋನೀಬೆಜೆಕನು ಅಲ್ಲಿಂದ ಓಡಿಹೋಗುತ್ತಿರುವಾಗ ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.</verse>
				<verse number="7">ಆಗ ಅದೋನೀಬೆಜೆಕನು, “ಎಪ್ಪತ್ತು ಮಂದಿ ಅರಸರ ಕೈಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿದೆ; ನನ್ನ ಊಟದ ಮೇಜಿನ ಕೆಳಗೆ ಬೀಳುತ್ತಿದ್ದ ಚೂರುಪಾರುಗಳನ್ನು ಅವರು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾರೆ,” ಎಂದನು. ಅವನನ್ನು ಜೆರುಸಲೇಮಿಗೆ ಕರೆತರಲು ಅವನು ಅಲ್ಲೇ ನಿಧನನಾದನು.</verse>
				<verse number="8">ಯೆಹೂದ ಕುಲದವರು ಜೆರುಸಲೇಮಿನೊಡನೆ ಯುದ್ಧಮಾಡಿದರು. ಆ ಜನರನ್ನು ಕತ್ತಿಗೆ ತುತ್ತಾಗಿಸಿ ಅವರ ಪಟ್ಟಣವನ್ನು ಸುಟ್ಟುಹಾಕಿದರು.</verse>
				<verse number="9">ಅನಂತರ ಅವರು ಪರ್ವತಪ್ರದೇಶ, ದಕ್ಷಿಣಸೀಮೆ ಮತ್ತು ತಗ್ಗುಪ್ರದೇಶ ಇವುಗಳಿಗೆ ಹೋಗಿ ಅಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.</verse>
				<verse number="10">‘ಕಿರ್ಯತರ್ಬ’ ಎಂದು ಈ ಮುಂದೆ ಹೆಸರುಗೊಂಡಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ದಾಳಿಮಾಡಿ ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬವರನ್ನು ಸೋಲಿಸಿದರು.</verse>
				<verse number="11">ಅಲ್ಲಿಂದ ದೆಬೀರಿನವರೆಗೆ ತೆರಳಿ ಅಲ್ಲಿಯವರ ವಿರುದ್ಧ ಯುದ್ಧಮಾಡಿದರು. ದೆಬೀರಕ್ಕೆ ಇದಕ್ಕೆ ಮುಂಚೆ ‘ಕಿರ್ಯತ್ ಸೇಫೆರ್’ ಎಂಬ ಹೆಸರಿತ್ತು.</verse>
				<verse number="12">ಕಿರ್ಯತ್ ಸೇಫೆರನ್ನು ಹಿಡಿದುಕೊಳ್ಳುವವನಿಗೆ ತನ್ನ ಮಗಳು ‘ಅಕ್ಷಾ’ ಎಂಬಾಕೆಯನ್ನು ಕೊಟ್ಟು ಮದುವೆ ಮಾಡುವುದಾಗಿ ಕಾಲೇಬನು ಹೇಳಿದ್ದನು.</verse>
				<verse number="13">ಅಂತೆಯೇ ಅವನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನು ಅದನ್ನು ಹಿಡಿದುಕೊಂಡಾಗ ಕಾಲೇಬನು ತನ್ನ ಮಗಳು ಅಕ್ಷಾ ಎಂಬಾಕೆಯನ್ನು ಆತನಿಗೆ ಮದುವೆಮಾಡಿಕೊಟ್ಟನು.</verse>
				<verse number="14">ಆಕೆ ಬಂದಾಗ ತನ್ನ ತಂದೆಯ ಬಳಿ ಭೂಮಿಯನ್ನು ಕೇಳುವಂತೆ ಗಂಡನನ್ನು ಪ್ರೇರೇಪಿಸಿದಳು. ಆಕೆ ಕತ್ತೆಯಿಂದ ಇಳಿಯುವಾಗ ಕಾಲೇಬನು, “ನಿನಗೇನು ಬೇಕು,” ಎಂದು ಕೇಳಲು ಅವಳು, “ನನ್ನನ್ನು ಬೆಂಗಾಡಿಗೆ ಕೊಟ್ಟುಬಿಟ್ಟಿರಿ,</verse>
				<verse number="15">ಬುಗ್ಗೆಗಳಿರುವ ಭೂಮಿಯನ್ನು ದಾನವಾಗಿ ಕೊಡಿ,” ಎಂದಳು. ಕಾಲೇಬನು ಆಕೆಗೆ ಮೇಲಿನ ಹಾಗು ಕೆಳಗಿನ ಬುಗ್ಗೆಗಳನ್ನು ದಾನ ಮಾಡಿದನು.</verse>
				<verse number="16">ಕೇನ್ಯನೂ ಮೋಶೆಯ ಮಾವನೂ ಆದ ಹೋಬಾಬನ ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ ಕುಲದವರ ಜೊತೆಯಲ್ಲಿ ಆರಾದಿನ ದಕ್ಷಿಣದಲ್ಲಿರುವ ಯೆಹೂದ ಮರುಭೂಮಿಗೆ ಬಂದು ಅಲ್ಲಿಯ ಜನರ ಸಂಗಡ ವಾಸಮಾಡಿದರು.</verse>
				<verse number="17">ತರುವಾಯ ಯೆಹೂದಕುಲದವರು ತಮ್ಮ ಬಂಧುಗಳಾದ ಸಿಮೆಯೋನ್ ಕುಲದವರ ಸಂಗಡ ಹೋಗಿ ‘ಚೆಫತ್’ ಎಂಬ ಪಟ್ಟಣದಲ್ಲಿದ್ದ ಕಾನಾನ್ಯರನ್ನು ಸೋಲಿಸಿ ಆ ಪಟ್ಟಣವನ್ನು ಹಾಳುಮಾಡಿ ಅದನ್ನು ‘ಹೋರ್ಮಾ’ ಎಂದು ಕರೆದರು.</verse>
				<verse number="18">ಅನಂತರ ಅವರು ಗಾಜಾ, ಅಷ್ಕೆಲೋನ್, ಎಕ್ರೋನ್ ಎಂಬ ಪಟ್ಟಣಗಳನ್ನೂ ಅವುಗಳ ಮೇರೆಗಳನ್ನೂ ಸ್ವಾಧೀನಮಾಡಿಕೊಂಡರು.</verse>
				<verse number="19">ಸರ್ವೇಶ್ವರ ಯೆಹೂದಕುಲದವರ ಸಂಗಡ ಇದ್ದುದರಿಂದ ಅವರು ಪರ್ವತ ಪ್ರದೇಶಗಳನ್ನೆಲ್ಲಾ ಸ್ವತಂತ್ರಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣ ರಥಗಳಿದ್ದುದರಿಂದ ಅವರನ್ನು ಹೊರಗಟ್ಟಲು ಆಗಲಿಲ್ಲ.</verse>
				<verse number="20">ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು; ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಅಟ್ಟಿಬಿಟ್ಟನು.</verse>
				<verse number="21">ಜೆರುಸಲೇಮಿನಲ್ಲಿದ್ದ ಯೆಬೂಸಿಯರನ್ನು ಹೊರಡಿಸಲು ಬೆನ್ಯಾಮೀನ್ಯರಿಂದ ಆಗದೆಹೋಯಿತು. ಅವರು ಇಂದಿನವರೆಗೂ, ಬೆನ್ಯಾಮೀನ್ಯರ ಸಂಗಡ ಜೆರುಸಲೇಮಿನಲ್ಲೇ ವಾಸವಾಗಿ ಇದ್ದಾರೆ.</verse>
				<verse number="22">ಇವರ ಹಾಗೆಯೇ ಜೋಸೆಫನ ಕುಲದವರು ಹೊರಟು ಬೇತೇಲಿಗೆ ಬಂದರು. ಸರ್ವೇಶ್ವರಸ್ವಾಮಿ ಅವರೊಂದಿಗೆ ಇದ್ದರು.</verse>
				<verse number="23">ಅವರು ‘ಲೂಜ್’ ಎಂದು ಕರೆಯಲಾದ ಬೇತೇಲ್ ಊರನ್ನು ಸಂಚರಿಸಿ ನೋಡಲು ಗೂಢಚಾರರನ್ನು ಕಳುಹಿಸಿದರು.</verse>
				<verse number="24">ಇವರು ಆ ಊರೊಳಗಿಂದ ಬರುತ್ತಿದ್ದ ಒಬ್ಬ ವ್ಯಕ್ತಿಯನ್ನು ಕಂಡು, “ದಯಮಾಡಿ, ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸಿಕೊಡು; ನಾವು ನಿನಗೆ ಒಳ್ಳೆಯದನ್ನೇ ಮಾಡುತ್ತೇವೆ,” ಎಂದರು. ಅವನು ಅವರಿಗೆ ಆ ದಾರಿಯನ್ನು ತೋರಿಸಿದನು.</verse>
				<verse number="25">ಹೀಗೆ ಅವರು ಆ ಪಟ್ಟಣವನ್ನು ಕತ್ತಿಗೆ ತುತ್ತಾಗಿಸಿದರು. ಆದರೆ ಆ ವ್ಯಕ್ತಿಯನ್ನು ಮತ್ತು ಅವನ ಕುಟುಂಬದವರನ್ನು ಕಳುಹಿಸಿಬಿಟ್ಟರು.</verse>
				<verse number="26">ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ‘ಲೂಜ್’ ಎಂದು ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಅದೇ ಹೆಸರು ಉಳಿದಿದೆ.</verse>
				<verse number="27">ಮನಸ್ಸೆಕುಲದವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳನ್ನೂ ಅವುಗಳ ಗ್ರಾಮಗಳನ್ನೂ ಸ್ವಾಧೀನಮಾಡಿಕೊಳ್ಳಲಿಲ್ಲ, ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ನಿರ್ಧರಿಸಿಕೊಂಡರು.</verse>
				<verse number="28">ಇಸ್ರಯೇಲರು ಬಲಗೊಂಡ ಮೇಲೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಂಡರೇ ಹೊರತು ಅಲ್ಲಿಂದ ಅಟ್ಟಿಬಿಡಲಿಲ್ಲ.</verse>
				<verse number="29">ಎಫ್ರಯಿಮ್ ಕುಲದವರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಆದುದರಿಂದ ಅವರು ಅವರ ನಡುವೆಯೇ ವಾಸಿಸಿದರು.</verse>
				<verse number="30">ಜೆಬುಲೂನ್ ಕುಲದವರು ಕಿಟ್ರೋನ್, ನಹಲೋಲ್ ಎಂಬ ಪಟ್ಟಣಗಳ ನಿವಾಸಿಗಳನ್ನು ಅಟ್ಟಿಬಿಡಲಿಲ್ಲ. ಆದರೆ ಆ ಕಾನಾನ್ಯರು ಅವರಿಗೆ ಗುಲಾಮರಾಗಿ ಅವರ ಮಧ್ಯದಲ್ಲೇ ವಾಸಮಾಡಿದರು.</verse>
				<verse number="31">ಆಶೇರ್ಯ ಕುಲದವರು ಆಕ್ಕೋ, ಚೀದೋನ್, ಆಹ್ಲಾಬ್, ಅಕ್ಜೀಬ್, ಹೆಲ್ಬಾ, ರೆಹೋಬ್ ಎಂಬ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲಿಲ್ಲ;</verse>
				<verse number="32">ಅವರು ಆ ದೇಶದ ಕಾನಾನ್ಯರನ್ನು ಹೊರಡಿಸದೆ ಅವರ ಮಧ್ಯದಲ್ಲೇ ವಾಸಮಾಡಿದರು.</verse>
				<verse number="33">ನಫ್ತಾಲಿ ಕುಲದವರು ಬೇತ್ ಷೆಮೆಷ್, ಬೇತನಾತ್ ಎಂಬ ಊರುಗಳನ್ನು ಸ್ವತಂತ್ರಿಸಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು. ಮತ್ತು ಆ ಬೇತ್ ಷೆಮೆಷ್, ಬೇತನಾತ್ ಊರುಗಳ ಜನರು ಅವರಿಗೆ ಗುಲಾಮರಾದರು.</verse>
				<verse number="34">ಇದಲ್ಲದೆ ಅಮೋರಿಯರು ದಾನ್ ಕುಲದವರನ್ನು ತಗ್ಗಿನ ಪ್ರದೇಶಕ್ಕೆ ಇಳಿಯಗೊಡದೆ ಹಿಂದಟ್ಟಿ ಬೆಟ್ಟಗಳಿಗೆ ಓಡಿಸಿಬಿಟ್ಟರು.</verse>
				<verse number="35">ಹೀಗೆ ಅಮೋರಿಯರು ಹರ್ ಹೆರೆಸ್, ಅಯ್ಯಾಲೋನ್, ಶಾಲ್ಬೀಮ್ ಎಂಬ ಊರುಗಳಲ್ಲೇ ವಾಸಿಸಲು ನಿರ್ಧಾರಮಾಡಿದರು. ಆದರೆ ಜೋಸೆಫ್ ಕುಲದವರ ಪ್ರಭಾವ ಹೆಚ್ಚಾದ ಮೇಲೆ ಅವರಿಗೆ ಗುಲಾಮರಾದರು.</verse>
				<verse number="36">ಅಮೋರಿಯರ ಮೇರೆಯು ಅಕ್ರಬ್ಬೀಮ್ ಕಣಿವೆಯಲ್ಲಿರುವ ಬಂಡೆಯಿಂದ ಮೇಲಕ್ಕೆ ವಿಸ್ತರಿಸಿಕೊಂಡಿದೆ.</verse>
			</chapter>
			<chapter number="2">
				<verse number="1">ಸರ್ವೇಶ್ವರಸ್ವಾಮಿಯ ದೂತನು ಗಿಲ್ಗಾಲಿನಿಂದ ಬೋಕೀಮಿಗೆ ಬಂದು ಇಸ್ರಯೇಲರಿಗೆ, “ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ ನಿಮ್ಮ ಪೂರ್ವಜರಿಗೆ ಪ್ರಮಾಣಮಾಡಿದ ನಾಡಿಗೆ ಕರೆದುತಂದೆನು. ನಿಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಎಂದೂ ಭಂಗಪಡಿಸುವುದಿಲ್ಲ ಎಂದು ಮಾತುಕೊಟ್ಟೆನು.</verse>
				<verse number="2">ಆಗ, ನೀವು ಈ ನಾಡಿನ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು, ಅವರ ಬಲಿಪೀಠಗಳನ್ನು ಕೆಡವಿಬಿಡಬೇಕು ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೇಕೆ ಮಾಡಿದಿರಿ?</verse>
				<verse number="3">ನೀವು ಹೀಗೆ ಮಾಡುವುದಾದರೆ ನಾನು ಈ ನಾಡಿನ ನಿವಾಸಿಗಳನ್ನು ನಿಮ್ಮಿಂದ ಓಡಿಸಿಬಿಡುವುದಿಲ್ಲ. ಅವರು ನಿಮ್ಮನ್ನು ಉಪದ್ರವಪಡಿಸುವರು. ಅವರ ದೇವತೆಗಳು ನಿಮ್ಮನ್ನು ತಮ್ಮ ಉರುಳಿನಲ್ಲಿ ಸಿಕ್ಕಿಸಿಕೊಳ್ಳುವುವು ಎಂದು ನಿಮಗೆ ಮೊದಲೇ ಹೇಳಿದ್ದೇನೆ” ಎಂದನು.</verse>
				<verse number="4">ಸರ್ವೇಶ್ವರನ ದೂತನು ಹೇಳಿದ ಈ ಮಾತುಗಳನ್ನು ಕೇಳಿ ಇಸ್ರಯೇಲರೆಲ್ಲರು ಗಟ್ಟಿಯಾಗಿ ಅತ್ತರು.</verse>
				<verse number="5">ಆದುದರಿಂದಲೇ ಆ ಸ್ಥಳಕ್ಕೆ ‘ಬೋಕೀಮ್’ ಎಂದು ಹೆಸರಿಟ್ಟು ಅಲ್ಲಿಯೇ ಸರ್ವೇಶ್ವರನಿಗೆ ಬಲಿಯನ್ನರ್ಪಿಸಿದರು.</verse>
				<verse number="6">ಯೆಹೋಶುವನು ಇಸ್ರಯೇಲರನ್ನು ಕಳುಹಿಸಿದ ಮೇಲೆ ಅವರು ತಮ್ಮ ತಮ್ಮ ಪಾಲಿಗೆ ಬಂದ ಪ್ರದೇಶಗಳಿಗೆ ಹೋಗಿ ಅವುಗಳನ್ನು ಸ್ವತಂತ್ರಿಸಿಕೊಂಡರು.</verse>
				<verse number="7">ಯೆಹೋಶುವನ ದಿನಗಳಲ್ಲೂ ಅವನ ಕಾಲದಿಂದ ಇನ್ನೂ ಜೀವಿಸುತ್ತಿದ್ದ ಹಿರಿಯರ ದಿನಗಳಲ್ಲೂ ಇಸ್ರಯೇಲರು ಸರ್ವೇಶ್ವರನಿಗೆ ಸೇವೆಸಲ್ಲಿಸುತ್ತಾ ಬಂದರು. ಈ ಹಿರಿಯರು ಸರ್ವೇಶ್ವರ ಇಸ್ರಯೇಲರ ಪರವಾಗಿ ಮಾಡಿದ ಮಹತ್ಕಾರ್ಯಗಳಿಗೆ ಸಾಕ್ಷಿಗಳಾಗಿದ್ದರು.</verse>
				<verse number="8">ಸರ್ವೇಶ್ವರನ ದಾಸ ನೂನನ ಮಗ ಯೆಹೋಶುವನು ನೂರಹತ್ತು ವರ್ಷದವನಾಗಿ ಮರಣಹೊಂದಿದನು.</verse>
				<verse number="9">ಅವನನ್ನು ಅವನ ಸ್ವಾಸ್ತ್ಯಭೂಮಿಯಾದ ತಿಮ್ನತ್ ಹೆರೆಸ್ ಎಂಬಲ್ಲಿ ಸಮಾಧಿಮಾಡಿದರು. ಅದು ಎಫ್ರಯಿಮ್ ಪರ್ವತಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿದೆ.</verse>
				<verse number="10">ಅವನ ಕಾಲದವರೆಲ್ಲರೂ ತಮ್ಮ ಪೂರ್ವಜರಂತೆ ದೈವಾಧೀನರಾದ ಮೇಲೆ ಬೇರೊಂದು ಸಂತಾನ ಹುಟ್ಟಿಕೊಂಡಿತು. ಇವರು ಸರ್ವೇಶ್ವರಸ್ವಾಮಿಯನ್ನು ಮರೆತರು; ಇಸ್ರಯೇಲರಿಗೆ ಮಾಡಿದ ಮಹತ್ಕಾರ್ಯಗಳ ನೆನಪು ಇವರಿಗೆ ಇರಲಿಲ್ಲ.</verse>
				<verse number="11">ಈ ಇಸ್ರಯೇಲರು ಬಾಳ್ ದೇವತೆಯ ಪ್ರತಿಮೆಗಳನ್ನು ಪೂಜಿಸಿ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು.</verse>
				<verse number="12">ತಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಕರೆದುತಂದ ದೇವರಾದ ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಮುತ್ತಲಿನ ಜನಾಂಗಗಳ ದೇವರುಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಸರ್ವೇಶ್ವರನನ್ನು ರೇಗಿಸಿದರು.</verse>
				<verse number="13">ಅವರು ಸರ್ವೇಶ್ವರನನ್ನು ಬಿಟ್ಟು ‘ಬಾಳ್ ಅಷ್ಟೋರೆತ್’ ಎಂಬ ದೇವತೆಗಳನ್ನು ಪೂಜಿಸತೊಡಗಿದರು.</verse>
				<verse number="14">ಆದ್ದರಿಂದ ಸರ್ವೇಶ್ವರನ ಕೋಪ ಅವರ ಮೇಲೆ ಉರಿಯಹತ್ತಿತು; ಅವರನ್ನು ಕೊಳ್ಳೆಹೊಡೆಯುವವರ ಕೈಗೆ ಒಪ್ಪಿಸಿದರು. ಶತ್ರುಗಳು ಅವರನ್ನು ಸುಲಿಗೆ ಮಾಡಿದರು. ಸರ್ವೇಶ್ವರ ಅವರನ್ನು ಅಕ್ಕಪಕ್ಕದ ವೈರಿಗಳಿಗೆ ಮಾರಿಬಿಟ್ಟರು. ಆ ಶತ್ರುಗಳ ಮುಂದೆ ಇಸ್ರಯೇಲರು ನಿಲ್ಲಲಾರದೆ ಹೋದರು.</verse>
				<verse number="15">ಮೊದಲೇ ಆಣೆಯಿಟ್ಟು ಹೇಳಿದಂತೆ ಅವರು ಎಲ್ಲಿಗೆ ಹೋದರೂ ಸರ್ವೇಶ್ವರನ ಕೈ ಅವರಿಗೆ ವಿರೋಧವಾಗಿಯೇ ಇತ್ತು. ಅವರಿಗೆ ಬಹಳ ದುಃಖ ಉಂಟಾಯಿತು.</verse>
				<verse number="16">ಆಗ ಸರ್ವೇಶ್ವರ ಅವರನ್ನು ಸೂರೆಮಾಡುವವರ ಕೈಯಿಂದ ತಪ್ಪಿಸಲು ನ್ಯಾಯಾಧಿಪತಿಗಳನ್ನು ಕಳುಹಿಸಿದರು.</verse>
				<verse number="17">ಇಸ್ರಯೇಲರು ಇವರ ಮಾತನ್ನೂ ಕೇಳದೆ ಅನ್ಯದೇವತೆಗಳನ್ನು ಪೂಜಿಸಿ ಅವುಗಳಿಗೆ ಅಡ್ಡಬಿದ್ದು ದೇವದ್ರೋಹಿಗಳಾದರು. ಸರ್ವೇಶ್ವರನ ಆಜ್ಞೆಗಳನ್ನು ಪಾಲಿಸುತ್ತಿದ್ದ ತಮ್ಮ ಪೂರ್ವಜರ ಮಾರ್ಗವನ್ನು ಬೇಗನೆ ತ್ಯಜಿಸಿಬಿಟ್ಟರು. ಅವರಂತೆ ನಡೆಯಲೇ ಇಲ್ಲ.</verse>
				<verse number="18">ವೈರಿಗಳ ಹಿಂಸೆಯನ್ನು ತಾಳಲಾರದೆ ಇಸ್ರಯೇಲರು ಗೋಳು ಇಟ್ಟರು. ಸರ್ವೇಶ್ವರ ಅದನ್ನು ಕೇಳಿ ಕನಿಕರಪಟ್ಟು ನ್ಯಾಯಾಧಿಪತಿಗಳನ್ನು ಕಳುಹಿಸಿಕೊಟ್ಟರು; ಜೀವಮಾನವೆಲ್ಲ ಅವರ ಸಂಗಡವೇ ಇದ್ದು ಅವರ ಮುಖಾಂತರ ಇಸ್ರಯೇಲರನ್ನು ಶತ್ರುಗಳಿಂದ ಬಿಡಿಸಿದರು. ತಮ್ಮನ್ನು ಹಿಂಸಿಸುತ್ತಿದ್ದವರ ಕಾಟವನ್ನು ತಾಳದೆ ಮೊರೆಯಿಡುವುದನ್ನು ಸರ್ವೇಶ್ವರ ಕೇಳಿ ಮನಮರುಗಿದರು.</verse>
				<verse number="19">ಅಂಥ ನ್ಯಾಯಾಧಿಪತಿಗಳು ತೀರಿಹೋದ ನಂತರ ಇಸ್ರಯೇಲರು ಮತ್ತೆ ತಮ್ಮ ಹಿಂದಿನವರಿಗಿಂತಲೂ ಭ್ರಷ್ಟರಾಗಿ ಅನ್ಯದೇವತೆಗಳನ್ನು ಅವಲಂಬಿಸಿ, ಅವುಗಳಿಗೆ ಸೇವೆಮಾಡಿ ಅಡ್ಡಬಿದ್ದರು. ಅವರು ತಮ್ಮ ದುರ್ಮಾರ್ಗಗಳನ್ನೂ ಹಠಮಾರಿತನವನ್ನೂ ಬಿಡಲೇ ಇಲ್ಲ.</verse>
				<verse number="20">ಆದ್ದರಿಂದ ಸರ್ವೇಶ್ವರನ ಕೋಪ ಇಸ್ರಯೇಲರ ಮೇಲೆ ಉರಿಯುತ್ತಲೇ ಇತ್ತು; “ಈ ಜನರ ಪೂರ್ವಜರಿಗೆ ನಾನು ಕೊಟ್ಟ ನಿಬಂಧನೆಯನ್ನು ಇವರು ಪಾಲಿಸಲಿಲ್ಲ, ನನ್ನ ಮಾತಿಗೆ ಕಿವಿಗೊಡಲಿಲ್ಲ.</verse>
				<verse number="21">ಆದ್ದರಿಂದ ಯೆಹೋಶುವನು ಸಾಯುವ ಮೊದಲು ಹೊರಗಟ್ಟದೆ ಬಿಟ್ಟ ಜನಾಂಗಗಳಲ್ಲಿ ಒಂದನ್ನಾದರೂ ನಾನು ಹೊರಡಿಸುವುದಿಲ್ಲ.</verse>
				<verse number="22">ಇವರು ತಮ್ಮ ಹಿರಿಯರಂತೆ ಜಾಗರೂಕತೆಯಿಂದ ಸರ್ವೇಶ್ವರನಾದ ನನ್ನ ಮಾರ್ಗದಲ್ಲಿ ನಡೆಯುವರೋ ಇಲ್ಲವೋ ಎಂದು ಈ ಜನಾಂಗಗಳ ಮುಖಾಂತರವೇ ಪರೀಕ್ಷಿಸುವೆನು,” ಎಂದುಕೊಂಡರು.</verse>
				<verse number="23">ಈ ಕಾರಣ ಸರ್ವೇಶ್ವರಸ್ವಾಮಿ ಯೆಹೋಶುವನ ಕೈಗೆ ಒಪ್ಪಿಸದೆ ಉಳಿಸಿದ್ದ ಜನಾಂಗಗಳನ್ನು ಬೇಗನೆ ಅಟ್ಟಿಬಿಡಲಿಲ್ಲ.</verse>
			</chapter>
			<chapter number="3">
				<verse number="1">ಕಾನಾನ್ಯರೊಡನೆ ನಡೆದ ಯುದ್ಧಗಳಲ್ಲಿ ಒಂದರಲ್ಲೂ ಪಾಲ್ಗೊಳ್ಳದೆ ಇದ್ದ ಇಸ್ರಯೇಲರನ್ನು ಪರೀಕ್ಷಿಸುವುದಕ್ಕೂ</verse>
				<verse number="2">ಇಸ್ರಯೇಲ್ ಸಂತತಿಯವರಲ್ಲಿ ಯುದ್ಧವಿದ್ಯೆ ಅರಿಯದವರಿಗೆ ಅದನ್ನು ಕಲಿಸುವುದಕ್ಕೂ ಸರ್ವೇಶ್ವರ ಆ ನಾಡಿನಲ್ಲೇ ಉಳಿಸಿದ ಅನ್ಯಜನಾಂಗದವರು ಇವರು:</verse>
				<verse number="3">ಐದುಮಂದಿ ಫಿಲಿಷ್ಟಿಯ ಪ್ರಭುಗಳು, ಸರ್ವಕಾನಾನ್ಯರು, ಸಿದೋನ್ಯರು, ಲೆಬನೋನ್ ಪರ್ವತದಲ್ಲಿ ಬಾಳ್ ಹೆರ್ಮೋನ್ ಬೆಟ್ಟದಿಂದ ಹಮಾತಿನ ದಾರಿಯವರೆಗೆ ವಾಸವಾಗಿರುವ ಹಿವ್ವಿಯರು.</verse>
				<verse number="4">ತಾವು ಮೋಶೆಯ ಮೂಲಕ ಇವರ ಪೂರ್ವಜರಿಗೆ ವಿಧಿಸಿದ ಆಜ್ಞೆಗಳನ್ನು ಇಸ್ರಯೇಲರು ಕೈಗೊಂಡು ನಡೆಯುವರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳುವುದಕ್ಕಾಗಿ ಸರ್ವೇಶ್ವರ ಅವರನ್ನು ಉಳಿಸಿದರು.</verse>
				<verse number="5">ಇಸ್ರಯೇಲರು ಕಾನಾನ್ಯ, ಹಿತ್ತಿಯ, ಅಮೋರಿಯ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ಎಂಬೀ ಜನಾಂಗಗಳ ಮಧ್ಯದಲ್ಲಿ ವಾಸಮಾಡುತ್ತಾ</verse>
				<verse number="6">ಅವರ ಕನ್ಯೆಯರನ್ನು ತಾವು ತಂದು ತಮ್ಮ ಕನ್ಯೆಯರನ್ನು ಅವರ ಕುಮಾರರಿಗೆ ಕೊಟ್ಟು ಅವರ ದೇವತೆಗಳನ್ನು ಪೂಜಿಸಿದರು.</verse>
				<verse number="7">ಇಸ್ರಯೇಲರು ಬಾಳ್, ಅಶೇರ ಎಂಬ ದೇವತೆಗಳನ್ನು ಪೂಜಿಸಿ ತಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟರು. ಅವರ ದೃಷ್ಟಿಯಲ್ಲಿ ದ್ರೋಹಿಗಳಾದರು.</verse>
				<verse number="8">ಆದುದರಿಂದ ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ಅವರನ್ನು ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮ್ ಎಂಬವನಿಗೆ ಮಾರಿಬಿಟ್ಟರು. ಈ ಕಾರಣ ಇಸ್ರಯೇಲರು ಎಂಟು ವರ್ಷಗಳವರೆಗೆ ಅವನಿಗೆ ಗುಲಾಮರಾಗಿದ್ದರು.</verse>
				<verse number="9">ಇಸ್ರಯೇಲರು ಮೊರೆಯಿಟ್ಟಾಗ ಅವರನ್ನು ಬಿಡುಗಡೆ ಮಾಡಲು ಸರ್ವೇಶ್ವರ ಒಬ್ಬ ವ್ಯಕ್ತಿಯನ್ನು ಎಬ್ಬಿಸಿದರು; ಆತನೇ ಕಾಲೇಬನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲ್.</verse>
				<verse number="10">ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನು ಇಸ್ರಯೇಲರಿಗೆ ನ್ಯಾಯ ದೊರಕಿಸಲು ಯುದ್ಧಕ್ಕೆ ಹೊರಟನು. ಎರಡು ನದಿಗಳ ಮಧ್ಯೆಯಿರುವ ಅರಾಮ್ ರಾಜ್ಯದ ಅರಸ ಕೂಷನ್ ರಿಷಾತಯಿಮನನ್ನು ಸರ್ವೇಶ್ವರ ಆತನ ಕೈಗೊಪ್ಪಿಸಿದ್ದರಿಂದ ಅವನನ್ನು ಸಂಪೂರ್ಣವಾಗಿ ಸೋಲಿಸಿಬಿಟ್ಟನು.</verse>
				<verse number="11">ನಾಡಿನಲ್ಲಿ ನಾಲ್ವತ್ತು ವರ್ಷಗಳ ಕಾಲ ನೆಮ್ಮದಿ ನೆಲಸಿತ್ತು. ತರುವಾಯ ಕೆನಜನ ಮಗ ಒತ್ನೀಯೇಲನು ಮರಣ ಹೊಂದಿದನು.</verse>
				<verse number="12">ಇಸ್ರಯೇಲರು ಮತ್ತೆ ಸರ್ವೆಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು. ಮೋವಾಬ್ಯರ ಅರಸ ಎಗ್ಲೋನನನ್ನು ಇಸ್ರಯೇಲರಿಗೆ ವಿರುದ್ಧ ಸರ್ವೇಶ್ವರ ಬಲಪಡಿಸಿದರು.</verse>
				<verse number="13">ಎಗ್ಲೋನನು ಅಮ್ಮೋನಿಯರನ್ನೂ ಅಮಾಲೇಕ್ಯರನ್ನೂ ಕೂಡಿಸಿಕೊಂಡು ಬಂದು ಇಸ್ರಯೇಲರನ್ನು ಸೋಲಿಸಿ ಖರ್ಜೂರ ನಗರವನ್ನು ಗೆದ್ದುಕೊಂಡನು.</verse>
				<verse number="14">ಹದಿನೆಂಟು ವರ್ಷಕಾಲ ಇಸ್ರಯೇಲರು ಅವನಿಗೆ ಗುಲಾಮರಾಗಿದ್ದರು.</verse>
				<verse number="15">ಆಗ ಇಸ್ರಯೇಲರು ಸರ್ವೇಶ್ವರನಿಗೆ ಮೊರೆಯಿಟ್ಟರು. ಅವರನ್ನು ಬಿಡುಗಡೆ ಮಾಡಲು ಬೆನ್ಯಾಮೀನ್ ಕುಲದ ಗೇರನ ಮಗ ಏಹೂದನನ್ನು ವಿಮೋಚಕನಾಗಿ ಕಳುಹಿಸಲಾಯಿತು. ಅವನೊಬ್ಬ ಎಡಚ. ಇಸ್ರಯೇಲರು ಅವನ ಮುಖಾಂತರ ಮೋವಾಬ್ಯರ ಅರಸ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.</verse>
				<verse number="16">ಅವನು ತನಗಾಗಿ ಒಂದುವರೆ ಅಡಿ ಉದ್ದವಾದ ಇಬ್ಬಾಯಿ ಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಒಳಗೆ, ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋದನು.</verse>
				<verse number="17">ಮೋವಾಬ್ಯರ ಅರಸ ಎಗ್ಲೋನನಿಗೆ ಕಾಣಿಕೆಯನ್ನು ಒಪ್ಪಿಸಿದನು. ಎಗ್ಲೋನನು ಬಹಳ ದಪ್ಪನಾದ ವ್ಯಕ್ತಿ.</verse>
				<verse number="18">ಏಹೂದನು ಕಾಣಿಕೆಯನ್ನು ಒಪ್ಪಿಸಿದ ಮೇಲೆ ಅದನ್ನು ಹೊತ್ತು ತಂದ ಆಳುಗಳನ್ನು ಕಳುಹಿಸಿಬಿಟ್ಟನು.</verse>
				<verse number="19">ತಾನಾದರೋ ಗಿಲ್ಗಾಲಿನಲ್ಲಿರುವ ವಿಗ್ರಹಸ್ಥಳದವರೆಗೆ ಹೋಗಿ, ಹಿಂದಿರುಗಿ ಎಗ್ಲೋನನ ಬಳಿಗೆ ಬಂದನು; “ಅರಸರೇ, ತಮಗೆ ತಿಳಿಸಬೇಕಾದ ಒಂದು ರಹಸ್ಯ ವಿಷಯವಿದೆ,” ಎಂದನು. ಆಗ ಅರಸ, “ನಿಶ್ಯಬ್ದ” ಎಂದನು. ಅವನ ಸೇವಕರೆಲ್ಲರು ಅಲ್ಲಿಂದ ಹೊರಗೆ ಹೋದರು.</verse>
				<verse number="20">ಅರಸನು ತನ್ನ ತಂಪಾದ ಮೇಲುಪ್ಪರಿಗೆಯಲ್ಲಿ ಒಬ್ಬನೇ ಕುಳಿತುಕೊಂಡಿದ್ದಾಗ ಏಹೂದನು ಅವನ ಬಳಿಗೆ ಬಂದನು; “ನಿಮಗೆ ತಿಳಿಸಬೇಕಾದ ಒಂದು ದೈವೋಕ್ತಿ ಇದೆ,” ಎಂದನು. ಅರಸನು ತನ್ನ ಸಿಂಹಾಸನದಿಂದ ಎದ್ದು ನಿಂತನು.</verse>
				<verse number="21">ಆಗ ಏಹೂದನು ಎಡಗೈ ಚಾಚಿ, ಬಲಗಡೆಯ ಸೊಂಟಕ್ಕೆ ಕಟ್ಟಿದ್ದ ಕತ್ತಿಯನ್ನು ಹಿರಿದು ಅವನ ಹೊಟ್ಟೆಯನ್ನು ತಿವಿದನು.</verse>
				<verse number="22">ಆ ಕತ್ತಿ ಹಿಡಿಯ ಸಮೇತ ಹೊಟ್ಟೆಯನ್ನು ಹೊಕ್ಕಿತು. ಏಹೂದನು ಕತ್ತಿಯನ್ನು ಹೊರಗೆ ತೆಗೆಯಲಿಲ್ಲ. ಬೊಜ್ಜು ಅದನ್ನು ಮುಚ್ಚಿಕೊಂಡಿತ್ತು. ಮಲ ಹೊರಗೆ ಬಂದಿತು.</verse>
				<verse number="23">ಏಹೂದನು ಆ ಮೇಲುಪ್ಪರಿಗೆಯ ಕದವನ್ನು ಮುಚ್ಚಿ, ಅಗುಳಿ ಹಾಕಿ ಪಡಸಾಲೆಯ ಮೂಲಕ ಹೊರಟು ಹೋದನು.</verse>
				<verse number="24">ತರುವಾಯ ಸೇವಕರು ಅಲ್ಲಿಗೆ ಬಂದು ಬಾಗಿಲಿಗೆ ಅಗುಳಿ ಹಾಕಿರುವುದನ್ನು ಕಂಡು, “ಅರಸ ತಂಪಾದ ಕೊಠಡಿಗೆ ಸೇರಿದ ಪಾಯಖಾನೆಗೆ ಹೋಗಿರಬೇಕೆಂದು,</verse>
				<verse number="25">ತಮಗೆ ಬೇಸರವಾಗುವ ತನಕ ಕಾಯುತ್ತಾ ಇದ್ದರು. ಆದರೂ ಅರಸ ಕದಗಳನ್ನು ತೆರೆಯದೆ ಇರುವುದನ್ನು ನೋಡಿ ಬೀಗದ ಕೈಯಿಂದ ತಾವೇ ಬಾಗಿಲು ತೆರೆದರು. ಇಗೋ, ಅವರ ಒಡೆಯ ನೆಲದ ಮೇಲೆ ಸತ್ತುಬಿದ್ದಿದ್ದನು!</verse>
				<verse number="26">ಅವರು ಕಾಯ್ದಿದ್ದ ಸಮಯದಲ್ಲೇ ಏಹೂದನು ತಪ್ಪಿಸಿಕೊಂಡು ವಿಗ್ರಹಗಳಿದ್ದ ಸ್ಥಳದಲ್ಲಿ ನದಿ ದಾಟಿ</verse>
				<verse number="27">ಸೆಯೀರಾ ಎಂಬಲ್ಲಿಗೆ ಬಂದು ಎಫ್ರಯಿಮ್ ಪರ್ವತಪ್ರದೇಶದಲ್ಲಿ ಕಹಳೆಯನ್ನು ಊದಿದನು. ಕೂಡಲೆ ಇಸ್ರಯೇಲರು ಅವನ ಬಳಿಗೆ ಬಂದು, ಗುಡ್ಡದಿಂದ ಇಳಿದು ಅವನ ಸಂಗಡ ಹೊರಟರು.</verse>
				<verse number="28">ಏಹೂದನು ಅವರಿಗೆ ನಾಯಕನಾಗಿ, “ನನ್ನನ್ನು ಹಿಂಬಾಲಿಸಿ ಬನ್ನಿ; ಸರ್ವೇಶ್ವರ ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೊಪ್ಪಿಸಿದ್ದಾರೆ,” ಎಂದನು. ಅಂತೆಯೇ ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲ ಹಿಡಿದುಕೊಂಡು ಯಾರನ್ನೂ ದಾಟಗೊಡಲಿಲ್ಲ.</verse>
				<verse number="29">ಅಂದು ಅವರು ಸುಮಾರು ಹತ್ತು ಸಾವಿರಮಂದಿ, ಪುಷ್ಠ ಹಾಗು ಪರಾಕ್ರಮಿಗಳಾದ ಮೋವಾಬ್ಯರನ್ನು ಸದೆಬಡಿದರು. ಒಬ್ಬನೂ ತಪ್ಪಿಸಿಕೊಳ್ಳಲಾಗಲಿಲ್ಲ.</verse>
				<verse number="30">ಮೋವಾಬ್ಯರು ಇಸ್ರಯೇಲರಿಗೆ ಶರಣಾದರು; ನಾಡಿನಲ್ಲಿ ಎಂಬತ್ತು ವರ್ಷ ನೆಮ್ಮದಿ ಇತ್ತು.</verse>
				<verse number="31">ಏಹೂದನ ಬಳಿಕ ಅನಾತನ ಮಗ ಶಮ್ಗರನು ಮುಂದೆಬಂದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಕೊಂದು ಇಸ್ರಯೇಲರನ್ನು ಕಾಪಾಡಿದನು.</verse>
			</chapter>
			<chapter number="4">
				<verse number="1">ಏಹೂದನು ನಿಧನನಾದ ನಂತರ ಇಸ್ರಯೇಲರು ಪುನಃ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು.</verse>
				<verse number="2">ಈ ಕಾರಣ ಸರ್ವೇಶ್ವರ ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯ ರಾಜನಾದ ಯಾಬೀನನಿಗೆ ವಶಪಡಿಸಿದರು. ಮ್ಲೇಚ್ಛರ ಹರೋಷೆತ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಪತಿ ಆಗಿದ್ದನು.</verse>
				<verse number="3">ಒಂಬೈನೂರು ಕಬ್ಬಿಣದ ರಥಗಳನ್ನು ಪಡೆದಿದ್ದ ಇವನು ಇಸ್ರಯೇಲರನ್ನು ಇಪ್ಪತ್ತು ವರ್ಷಕಾಲ ದಬ್ಬಾಳಿಕೆಗೆ ಈಡುಪಡಿಸಿದನು. ಆಗ ಅವರು ಸರ್ವೇಶ್ವರನಿಗೆ ಮೊರೆಯಿಟ್ಟರು.</verse>
				<verse number="4">ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿ ದೆಬೋರಳೆಂಬ ಪ್ರವಾದಿನಿ ಇಸ್ರಯೇಲರಲ್ಲಿ ನ್ಯಾಯ ತೀರಿಸುತ್ತಿದ್ದಳು.</verse>
				<verse number="5">ಆಕೆ ಎಫ್ರಯಿಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ‘ದೆಬೋರಳ ಖರ್ಜೂರ ವೃಕ್ಷ’ವೆಂದು ಹೆಸರುಗೊಂಡ ಮರದ ಕೆಳಗೆ ಆಸೀನಳಾಗಿರುತ್ತಿದ್ದಳು. ಇಸ್ರಯೇಲರು ನ್ಯಾಯತೀರ್ಪಿಗಾಗಿ ಆಕೆಯ ಬಳಿಗೆ ಬರುತ್ತಿದ್ದರು.</verse>
				<verse number="6">ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗ ಬಾರಾಕನನ್ನು ಬರಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಯೇಲರ ದೇವರಾದ ಸರ್ವೇಶ್ವರ ನಿನಗೆ ಆಜ್ಞಾಪಿಸಿದ್ದಾರೆ: ‘ನೀನೆದ್ದು ನಫ್ತಾಲಿ ಮತ್ತು ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು;</verse>
				<verse number="7">ಯಾಬೀನನ ಸೇನಾಪತಿ ಸೀಸೆರನನ್ನು ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬರುವರು. ಅವನಿಗೆ ರಥಗಳೂ ಸೇನಾಪಡೆಗಳೂ ಇದ್ದರೂ ನಾನು ನಿನಗೆ ಜಯವನ್ನು ದೊರಕಿಸುವೆನು’,” ಎಂದಳು.</verse>
				<verse number="8">ಬಾರಾಕನು ಆಕೆಗೆ, “ನೀನು ನನ್ನ ಸಂಗಡ ಬರುವುದಾದರೆ ಹೋಗುತ್ತೇನೆ; ಇಲ್ಲವಾದರೆ ಹೋಗುವುದಿಲ್ಲ,” ಎಂದನು.</verse>
				<verse number="9">ಆಕೆ, “ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧದಿಂದ ನಿನಗೆ ಗೌರವಗಿಟ್ಟದು; ಏಕೆಂದರೆ ಸರ್ವೇಶ್ವರ ಸೀಸೆರನನ್ನು ಒಬ್ಬ ಮಹಿಳೆಗೆ ಒಪ್ಪಿಸಿಕೊಡುವರು,” ಎಂದು ಹೇಳಿ ಬಾರಾಕನೊಡನೆ ಕೆದೆಷಿಗೆ ಹೋದಳು.</verse>
				<verse number="10">ಬಾರಾಕನು ಜೆಬುಲೂನ್ಯರನ್ನೂ, ನಫ್ತಾಲ್ಯರನ್ನೂ ಕೆದೆಷಿಗೆ ಕರೆಸಿದನು. ಅವರಲ್ಲಿ ಹತ್ತುಸಾವಿರ ಮಂದಿ ಅವನ ಹೆಜ್ಜೆಹಿಡಿದು ಯುದ್ಧಕ್ಕೆ ಹೋದರು. ದೆಬೋರಳೂ ಹೋದಳು.</verse>
				<verse number="11">ಕೇನ್ಯನಾದ ಹೆಬೆರನು ಮೋಶೆಯ ಮಾವ ಹೋಬಾಬನ ವಂಶದ ಉಳಿದ ಕೇನ್ಯರನ್ನು ಬಿಟ್ಟು ಕೆದೆಷಿನ ಹತ್ತಿರ ಇರುವ ‘ಚಾನನ್ನೀಮ್’ ಎಂಬ ಊರಿನ ಏಲೋನ್ ವೃಕ್ಷದವರೆಗೆ ಬಂದು ಅಲ್ಲಿ ಗುಡಾರ ಹಾಕಿಕೊಂಡಿದ್ದನು.</verse>
				<verse number="12">ಅಬೀನೋವಮನ ಮಗ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನ ಸೀಸೆರನಿಗೆ ಮುಟ್ಟಿದಾಗ</verse>
				<verse number="13">ಅವನು ತನ್ನ ಒಂಬೈನೂರು ಕಬ್ಬಿಣದ ರಥಗಳನ್ನೂ ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಮ್ಲೇಚ್ಛರ ಹರೋಷೆತಿನಿಂದ ಕೀಷೋನ್ ಹಳ್ಳಕ್ಕೆ ಬಂದನು.</verse>
				<verse number="14">ಆಗ ದೆಬೋರಳು ಬಾರಾಕನಿಗೆ, “ಏಳು, ಸರ್ವೇಶ್ವರ ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನ ಇದೇ; ನಿಶ್ಚಯವಾಗಿ ಅವರು ತಾವೇ ನಿನ್ನ ಮುಂದಾಗಿ ಯುದ್ಧಕ್ಕೆ ಹೊರಡುವರು,” ಎಂದಳು. ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತ ತಾಬೋರ್ ಬೆಟ್ಟದಿಂದಿಳಿದನು.</verse>
				<verse number="15">ಸರ್ವೇಶ್ವರ ಸೀಸೆರನನ್ನೂ ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಪಡಿಸಿ ಕತ್ತಿಗೆ ತುತ್ತಾಗಿಸಿದರು. ಸೀಸೆರನು ರಥದಿಂದ ಹಾರಿ ಓಡಿಹೋದನು.</verse>
				<verse number="16">ಬಾರಾಕನು ಅವನ ಸೈನ್ಯರಥಗಳನ್ನು ಮ್ಲೇಚ್ಛರ ಹರೋಷೆತಿನವರೆಗೂ ಹಿಂದಟ್ಟಿದನು. ಸೀಸೆರನ ಸೈನ್ಯದವರೆಲ್ಲರು ಕತ್ತಿಯಿಂದ ಹತರಾದರು; ಒಬ್ಬನೂ ಉಳಿಯಲಿಲ್ಲ.</verse>
				<verse number="17">ಹಾಚೋರಿನ ಅರಸ ಯೂಬೀನನಿಗೂ ಕೇನ್ಯನದ ಹೆಬೆರನ ಮನೆಯವರಿಗೂ ಸಮಾಧಾನ ಇದ್ದುದರಿಂದ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರದ ಕಡೆಗೆ ಹೋದನು.</verse>
				<verse number="18">ಯಾಯೇಲಳು ಹೊರಗೆಹೋಗಿ ಸೀಸೆರನನ್ನು ಎದುರುಗೊಂಡು ಅವನಿಗೆ, “ಒಡೆಯಾ, ಒಳಗೆ ಬನ್ನಿ; ಹೆದರಬೇಡಿ, ನಮ್ಮಲ್ಲಿಗೆ ಬನ್ನಿ,” ಎನ್ನಲು ಅವನು ಗುಡಾರದೊಳಗೆ ಹೋದನು. ಆಗ ಆಕೆ ಅವನನ್ನು ಕಂಬಳಿಯಿಂದ ಮುಚ್ಚಿದಳು.</verse>
				<verse number="19">ಅವನು ಆಕೆಗೆ, “ದಯವಿಟ್ಟು ಸ್ವಲ್ಪ ನೀರನ್ನು ಕೊಡು, ನನಗೆ ಬಹಳ ದಾಹವಾಗಿದೆ,” ಎಂದನು. ಆಕೆ ಬುದ್ದಲಿಯನ್ನು ಬಿಚ್ಚಿ ಹಾಲನ್ನು ಕುಡಿಯಕೊಟ್ಟು ಅವನನ್ನು ಮತ್ತೆ ಮುಚ್ಚಿದಳು.</verse>
				<verse number="20">ಅವನು ಆಕೆಗೆ, “ನೀನು ಗುಡಾರದ ಬಾಗಿಲಲ್ಲೇ ನಿಂತಿರು; ಯಾರಾದರೂ ಬಂದು ‘ಇಲ್ಲಿ ಒಬ್ಬ ಮನುಷ್ಯ ಇರುವನೇ?’ ಎಂದು ವಿಚಾರಿಸಿದರೆ, ‘ಇಲ್ಲ’ ಎನ್ನು” ಎಂದು ಹೇಳಿದನು.</verse>
				<verse number="21">ಆದರೆ ಹೆಬೆರನ ಹೆಂಡತಿ ಯಾಯೇಲಳು ಕೈಯಲ್ಲಿ ಗುಡಾರದ ಗೂಟವನ್ನೂ ಒಂದು ಕೊಡತಿಯನ್ನೂ ತೆಗೆದುಕೊಂಡು ಅವನು ಆಯಾಸದಿಂದ ಗಾಢನಿದ್ರೆಯಲ್ಲಿದ್ದಾಗ ಮೆಲ್ಲಗೆ ಹತ್ತಿರ ಹೋಗಿ ಅವನ ಕಣತಲೆಯಲ್ಲಿ ಆ ಗೂಟವನ್ನು ಹೊಡೆದು ನೆಲಕ್ಕೆ ನಾಟಿಸಿದಳು; ಅವನು ಸತ್ತನು.</verse>
				<verse number="22">ಅದೇ ಕ್ಷಣದಲ್ಲಿ ಸೀಸೆರನನ್ನು ಹಿಂದಟ್ಟುತ್ತಿದ್ದ ಬಾರಾಕನು ಅಲ್ಲಿಗೆ ಬಂದನು. ಯಾಯೇಲಳು ಹೊರಗೆ ಹೋಗಿ ಅವನನ್ನು ಎದುರುಗೊಂಡು, “ಬಾ, ನೀನು ಹುಡುಕುವ ಮನುಷ್ಯನನ್ನು ತೋರಿಸುತ್ತೇನೆ,” ಎಂದು ಹೇಳಲು ಅವನು ಒಳಗೆ ಹೋಗಿ ಸೀಸೆರನು ಸತ್ತುಬಿದ್ದದ್ದನ್ನು ಕಂಡನು. ಅವನ ತಲೆಯಲ್ಲಿ ಗೂಟವು ಜಡಿದಿತ್ತು.</verse>
				<verse number="23">ಆ ದಿನದಂದು ದೇವರು ಕಾನಾನ್ಯ ರಾಜನಾದ ಯಾಬೀನನನ್ನು ಇಸ್ರಯೆಲರಿಗೆ ಶರಣಾಗತನಾಗುವಂತೆ ಮಾಡಿದರು.</verse>
				<verse number="24">ಇಸ್ರಯೇಲರು ಹೆಚ್ಚು ಹೆಚ್ಚು ಬಲಗೊಂಡದ್ದರಿಂದ ಕಾನಾನ್ಯರ ಅರಸ ಯಾಬೀನನು ಪೂರ್ಣವಾಗಿ ಸೋತು ನಿರ್ನಾಮವಾದನು.</verse>
			</chapter>
			<chapter number="5">
				<verse number="1">ಆ ದಿನ ದೆಬೋರಳು ಮತ್ತು ಅಬೀನೋವಮನ ಮಗ ಬಾರಾಕನು ಈ ಗೀತೆಯನ್ನು ಹಾಡಿದರು:</verse>
				<verse number="2">	ಪಣತೊಟ್ಟಿದ್ದರು ಇಸ್ರಯೇಲಿನ ವೀರರು ಸೈನ್ಯಸೇರಿದ್ದಾರೆ ಸ್ವೇಚ್ಛೆಯಿಂದಾ ಜನರು ಮಾಡಿರಿ ನೀವು ಸರ್ವೇಶ್ವರನಾ ಗುಣಗಾನವನು;</verse>
				<verse number="3">ಅರಸರೇ, ಕೇಳಿ! ಪ್ರಭುಗಳೇ, ಕಿವಿಗೊಡಿ; ನಾ ಕಟ್ಟುವೆನು ಕವಿತೆಯನು ಸರ್ವೇಶ್ವರನಿಗೆ ನಾ ಭಜಿಸಿ ಹಾಡುವೆನು ಇಸ್ರಯೇಲರಾ ದೇವನಿಗೆ;</verse>
				<verse number="4">ಎದೋಮ್ಯರ ಪ್ರಾಂತ್ಯದಿಂದ, ಸೇಯೀರ ಗುಡ್ಡದಿಂದ ಹೇ ಸರ್ವೇಶ್ವರಾ, ನೀ ಹೊರಟು ಬರುವಾಗ ಕಂಪಿಸಿತು ಭೂಮಿ, ಹನಿಗರೆಯಿತು ಆಗಸ ಮಳೆಸುರಿಸಿತು ಮೇಘಮಂಡಲ.</verse>
				<verse number="5">ಕರಗಿಹೋದವು ಬೆಟ್ಟಗುಡ್ಡಗಳು ಆ ಸರ್ವೇಶ್ವರನ ಮುಂದೆ ನೀರಾಗಿ ಹೋಯಿತು ಸೀನಾಯಿ ಪರ್ವತವು ಇಸ್ರಯೇಲರ ದೇವನೆದುರಿಗೆ.</verse>
				<verse number="6">ಅನಾತನ ಮಗ ಶಮ್ಗರನ ಕಾಲದಲ್ಲಿ, ಯಾಯೇಲನ ದಿನಗಳಲಿ ನಿಂತುಹೋಯಿತು ಸಂಚಾರ ರಾಜಮಾರ್ಗಗಳಲಿ, ನಡೆದರು ಪಯಣಿಗರು ಸೀಳುದಾರಿಗಳಲಿ.</verse>
				<verse number="7">ದೆಬೋರಾ, ಇಸ್ರಯೇಲರ ತಾಯಿಯಂತೆ ನೀ ಬರುವ ಮುನ್ನ ಪಾಳುಬಿದ್ದಿದ್ದವು ಇಸ್ರಯೇಲ ಗ್ರಾಮಗಳೆಲ್ಲ.</verse>
				<verse number="8">ಆರಿಸಿಕೊಂಡಿದ್ದರು ಜನರು ಅನ್ಯ ದೇವತೆಗಳನು ಊರಬಾಗಿಲವರೆಗೆ ಬಂದಿತು ಕದನಕಾಳಗಗಳು ಇರಲಿಲ್ಲ ಗುರಾಣಿ, ಭರ್ಜಿಗಳಾವು ಓರ್ವರಲ್ಲೂ ಇಸ್ರಯೇಲರಾ ನಾಲ್ವತ್ತು ಸಾವಿರ ಸೈನಿಕರಲ್ಲೂ.</verse>
				<verse number="9">ಇಸ್ರಯೇಲಿನಾ ನಾಯಕರೊಡನೆ ಸೇರಿ ಸ್ವೇಚ್ಛೆಯಿಂದ ಸೈನ್ಯಸೇರಿದಾ ಜನರೊಡಗೂಡಿ ನಾ ನಲಿದು ಹಾಡುವೆನು, ಮಾಡಿರಿ ನೀವು ಸರ್ವೇಶ್ವರನ ಗುಣಗಾನವನು;</verse>
				<verse number="10">ಬಿಳೀ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ರತ್ನಗಂಬಳಿಗಳ ಮೇಲೆ ಕುಳಿತಿರುವವರೇ, ಮಾಡಿರಿ ಗಾನ, ಮಾಡಿರಿ ಗುಣಗಾನ, ಓ ಪಯಣಿಗರೇ.</verse>
				<verse number="11">ಸೇದುವ ಬಾವಿಗಳ ಬಳಿ ಕುಳಿತು ಕೊಳ್ಳೆಹಂಚಿಕೊಳ್ಳುವವರ ಧ್ವನಿಯನಾಲಿಸು! ವರ್ಣಿಸುತಿಹರವರು ಸರ್ವೇಶ್ವರ ಸಾಧಿಸಿದ ನೀತಿಯನು, ತನ್ನ ಪ್ರಜೆ ಇಸ್ರಯೇಲ್ ಊರುಗಳಲ್ಲಾತನು ಸ್ಥಾಪಿಸಿದ ನ್ಯಾಯವನು.</verse>
				<verse number="12">ಎಚ್ಚರಗೊಳ್ಳು, ಎಚ್ಚರಗೊಳ್ಳು, ದೆಬೋರಾ, ಎಚ್ಚರಗೊಳ್ಳು, ಎಚ್ಚರಗೊಳ್ಳು, ಮಾಡು ನೀ ಗುಣಗಾನ, ಬಾರಾಕನೇ, ಏಳು; ಅಬೀನೋವಮನ ಮಗನೇ, ಏಳು, ಸೆರೆಹಿಡಿದವರನು ನೀ ಸಾಗಿಸಿಕೊಂಡು ಹೋಗು.</verse>
				<verse number="13">ಚದರಿಹೋದವರು ಕೂಡಿಬಂದರು ನಾಯಕರ ಬಳಿಗೆ ಸರ್ವೇಶ್ವರನ ಶೂರಜನರು ವೀರರಂತೆ ನೆರೆದುಬಂದರು ನನ್ನ ಸಹಾಯಕ್ಕೆ.</verse>
				<verse number="14">ಬಂದರು ಅಮಾಲೇಕ್ಯರ ಪ್ರದೇಶದೊಳು ನೆಲೆಗೊಂಡ ಎಫ್ರಯೀಮ್ಯರು, ಅವರೊಂದಿಗೆ ಬಂದರು ಬೆನ್ಯಾಮೀನ್ಯರು, ಮಾಕೀರನ ಗೋತ್ರದ ಪ್ರಧಾನರು, ಜೆಬುಲೂನ್ ಕುಲದೊಳು ದಂಡಧಾರಿಗಳಾದ ಸೇನಾನಾಯಕರು.</verse>
				<verse number="15">ಇಸ್ಸಾಕಾರ್ ಕುಲಪ್ರಭುಗಳು ಬಂದರು ದೆಬೋರಳ ಜೊತೆಯಲ್ಲಿ, ಆಗಮಿಸಿದನು ಬಾರಾಕನು ಇಸ್ಸಾಕಾರ್ಯರ ಸಂಗಡದಲಿ, ಇವನ ಹೆಜ್ಜೆಹಿಡಿದು ಬಂದರು ಅವರೆಲ್ಲರು ತವಕದಲಿ.</verse>
				<verse number="16">ರೂಬೇನ್ಯರ ಮಧ್ಯೆ ಕಾಣಿಸಿಕೊಂಡಿತು ವಾದವಿವಾದಗಳು, ಮನೋವೇದನೆಗಳು: ರೂಬೇನ್ಯರೇ, ನೀವೇಕೆ ಕೂತಿರಿ ಕುರಿಹಟ್ಟಿಗಳಲಿ? ಮಂದೆಗಳ ಮಧ್ಯೆಯಲಿ ಕೇಳಬೇಕೆಂದೋ ಅಪಾಯದ ಸಿಳ್ಳು ಸದ್ದನು? ಹೌದು ರೂಬೇನ್ಯರ ಮಧ್ಯೆ ಕಾಣಿಸಿಕೊಂಡಿತು ವಾದವಿವಾದಗಳು, ಮನೋವೇದನೆಗಳು.</verse>
				<verse number="17">ಗಿಲ್ಯಾದರು ಉಳಿದರು ಜೋರ್ಡನಿನ ಆಚೆಯಲ್ಲೇ ದಾನ್ ಕುಲದವರು ಉಳಿಯರೇಕೆ, ಹಡಗುಗಳಲ್ಲೇ? ಅಶೇರ್ ಕುಲದವರೋ ಅಂಟುಕೊಂಡರು ತಮ್ಮ ರೇವುಗಳಿಗೇ ನೆಮ್ಮದಿಯಾಗಿ ಕೂತುಬಿಟ್ಟರು ಸಮುದ್ರತೀರದಲ್ಲೆ.</verse>
				<verse number="18">ಅಂಥವರಲ್ಲ ಈ ಜೆಬುಲೂನ್ಯರು, ನಫ್ತಾಲ್ಯರು ಪ್ರಾಣವನ್ನೇ ಮುಡಿಪಾಗಿಟ್ಟರು ರಣಭೂಮಿಯೊಳು.</verse>
				<verse number="19">ಎದ್ದುಬಂದು ಯುದ್ಧ ಮಾಡಿದರು ಅರಸುಗಳು ಕೂಡಿಬಂದು ಕಾದಾಡಿದರು ಕಾನಾನ್ಯ ರಾಜರುಗಳು ಮೆಗಿದ್ದೋ ನದಿಗಳ ಬಳಿ ತಾನಾಕದೊಳು ಆದರೆ ಗಿಟ್ಟಲಿಲ್ಲ ಅವರಿಗೆ ಬೆಳ್ಳಿದ್ರವ್ಯಗಳೇನು!</verse>
				<verse number="20">ಕದನವಾಡಿದವು ತಾರೆಗಳು ಆಗಸದಿಂದಲೆ ಯುದ್ಧಮಾಡಿದವು ಸೀಸೆರನ ವಿರುದ್ಧ ತಮ್ಮಾ ಪಥದಿಂದಲೆ.</verse>
				<verse number="21">ಶತ್ರುಗಳನು ಕೊಚ್ಚಿಕೊಂಡು ಹೋಯಿತು ಪೂರ್ವಪ್ರಸಿದ್ಧವಾದ ಆ ಕೀಷೋನ್ ಹೊಳೆಯು. ನನ್ನ ಮನವೇ, ನೀ ಧೈರ್ಯದಿಂದ ಮುಂದೆ ಸಾಗು.</verse>
				<verse number="22">ನೆಲ ಕಂಪಿಸಿತು ಕುದುರೆಗಳ ಭರದೌಡಿನಿಂದ ಸುತ್ತಿಗೆಯಂತಹ ಆ ಕಾಲುಗಳ ಪೆಟ್ಟಿನಿಂದ</verse>
				<verse number="23">‘ಶಾಪಹಾಕಿರಿ ಮೇರೋಜ್ ಊರಿಗೆ, ಅದರ ನಿವಾಸಿಗಳಿಗೆ ಬರಲಿಲ್ಲ ಅವರು ಯುದ್ಧವೀರರ ಜೊತೆಗೆ ಸರ್ವೇಶ್ವರನ ಸಹಾಯಕ್ಕೆ. ಶಪಿಸಿರಿ ಅವರನ್ನು’ ಎಂದು ಕರೆಗೊಟ್ಟನು ಸರ್ವೇಶ್ವರನ ದೂತನೆ.</verse>
				<verse number="24">ಗುಡಾರಗಳಲಿ ವಾಸಿಸುವ ಸ್ತ್ರೀಯರಲ್ಲಿ ಯಾಯೇಲಳೆ ಭಾಗ್ಯವತಿ, ಹೌದು, ಅವಳೇ ಭಾಗ್ಯವತಿ, ಕೇನ್ಯನಾದ ಹೆಬೆರನ ಆ ಹೆಂಡತಿ.</verse>
				<verse number="25">ನೀರು ಕೇಳಲು ಹಾಲು ಕೊಟ್ಟಳು ಉತ್ತಮ ಪಾತ್ರೆಯಲ್ಲಿ ಮೊಸರು ಕೊಟ್ಟಳು.</verse>
				<verse number="26">ಗೂಟ ತೆಗೆದುಕೊಂಡಳು ಕೈಚಾಚಿ ಹಿಡಿದಳು ಬಲಗೈಯಲಿ ದೊಡ್ಡಕೊಡತಿ ಜಡಿದಳು ಸೀಸೆರನ ತಲೆಯನು ಬಡಿದಳಾ ಕೊಡತಿಯಿಂದ ಕಣತಲೆಗೇ ತಿವಿದು.</verse>
				<verse number="27">ಬೊಗ್ಗಿಬಿದ್ದನು, ಉರುಳಿಬಿದ್ದನು, ಮುದುರಿಬಿದ್ದನವನು ಅವಳ ಕಾಲುಗಳ ಬಳಿ ಅಲ್ಲೆ ಸತ್ತುಬಿದ್ದನು.</verse>
				<verse number="28">ಸೀಸೆರನ ತಾಯಿ ಇಣುಕಿ ನೋಡಿದಳು ಕಿಟಕಿಯಿಂದ ಕೂಗಿದಳು ಆ ಕಿಟಕಿಯ ಜಾಲರಿಗಳಿಂದ; ‘ಇಷ್ಟು ಹೊತ್ತಾಗಬೇಕೆ ರಥ ಬರುವುದಕ್ಕೆ? ಕುದುರೆಗಳ ಕಾಲುಗಳಿಗೆ ಇಷ್ಟು ಸಾವಕಾಶವೇಕೆ?’</verse>
				<verse number="29">ಸಭ್ಯಸ್ತ್ರೀಯರೊಳು ಬುದ್ಧಿವಂತೆಯರು ಕೊಟ್ಟ ಉತ್ತರವನು ತನ್ನೊಳಗೇ ಮೆಲಕು ಹಾಕಿದ್ದಳು ಇಂತೆಂದುಕೊಂಡು:</verse>
				<verse number="30">‘ನಿಶ್ಚಯವಾಗಿ ಸಿಕ್ಕಿರಬೇಕು ಅವರಿಗೆ ಕೊಳ್ಳೆ ಹಂಚಿಕೊಳ್ಳುತ್ತಿರಬೇಕು ಅದನು ತಮ್ಮತಮ್ಮಲ್ಲೆ ಪ್ರತಿಯೊಬ್ಬ ಸೈನಿಕನಿಗೆ ಒಬ್ಬೊಬ್ಬ ದಾಸಿಯರು ಸೀಸೆರನಿಗೊ, ಬಣ್ಣಬಣ್ಣವಾದ ಬಟ್ಟೆಬರೆಗಳು ವಿಚಿತ್ರ ಕಸೂತಿಹಾಕಿದ ಒಂದೆರಡು ವಸ್ತ್ರಗಳು, ಕಂಠಮಾಲೆಗಳು’.</verse>
				<verse number="31">ಸರ್ವೇಶ್ವರನ ಶತ್ರುಗಳೆಲ್ಲರು ನಾಶವಾಗಲಿ ಇವರಂತೆ ಆತನ ಭಕ್ತರು ಬೆಳಗಲಿ ಉದಯಕಾಲದ ಸೂರ್ಯನಂತೆ! ನಾಡಿನಲಿ ನಾಲ್ವತ್ತು ವರ್ಷಕಾಲ ಶಾಂತಿ ನೆಲಸಿತ್ತು!</verse>
			</chapter>
			<chapter number="6">
				<verse number="1">ಇಸ್ರಯೇಲರು ಮತ್ತೆ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ದ್ರೋಹಿಗಳಾದರು. ಆದ್ದರಿಂದ ಸರ್ವೇಶ್ವರ ಅವರನ್ನು ಏಳುವರ್ಷಕಾಲ ಮಿದ್ಯಾನ್ಯರ ಕೈಗೊಪ್ಪಿಸಿದರು.</verse>
				<verse number="2">ಮಿದ್ಯಾನ್ಯರ ಶಕ್ತಿ ಹೆಚ್ಚಿತು. ಇಸ್ರಯೇಲರು ಅವರಿಗೆ ಹೆದರಿ ಬೆಟ್ಟಗುಡ್ಡಗಳಲ್ಲಿ ಕಂದರಗಳನ್ನೂ ಗುಹೆಗಳನ್ನೂ ಮಾಡಿ ಅವುಗಳಲ್ಲಿ ವಾಸಮಾಡಿದರು.</verse>
				<verse number="3">ಇವರು ಮಾಡುತ್ತಿದ್ದ ಬಿತ್ತನೆಯನ್ನು ಮಿದ್ಯಾನ್ಯರು, ಅಮಾಲೇಕ್ಯರು, ಹಾಗು ಪೂರ್ವದೇಶದವರು ಇವರಿಗೆ ವಿರುದ್ಧ ದಂಡೆತ್ತಿ ಬಂದು ಹಾಳು ಮಾಡುತ್ತಿದ್ದರು.</verse>
				<verse number="4">ಗಾಜಾ ಪ್ರಾಂತ್ಯದವರೆಗೆ ಭೂಮಿಯ ಫಲವನ್ನೆಲ್ಲ ನಾಶ ಮಾಡುತ್ತಿದ್ದರು. ಈ ಕಾರಣ ಇಸ್ರಯೇಲರಿಗೆ ದವಸಧಾನ್ಯವಾಗಲಿ, ಕುರಿದನಕತ್ತೆಗಳಾಗಲಿ ಉಳಿಯುತ್ತಿರಲಿಲ್ಲ.</verse>
				<verse number="5">ಆ ಶತ್ರುಗಳು ತಮ್ಮ ಕುರಿದನ ಗುಡಾರಗಳ ಸಮೇತ ಮಿಡತೆಗಳಂತೆ ಗುಂಪು ಗುಂಪಾಗಿ ಬರುತ್ತಿದ್ದರು. ಅವರ ಒಂಟೆಗಳೂ ಅಸಂಖ್ಯವಾಗಿದ್ದವು. ಆ ಗುಂಪುಗಳಿಂದ ನಾಡೆಲ್ಲ ನಾಶವಾಗುತ್ತಿತ್ತು.</verse>
				<verse number="6">ಆ ಮಿದ್ಯಾನ್ಯರ ನಿಮಿತ್ತ ಇಸ್ರಯೇಲರು ಬಹಳವಾಗಿ ಕುಗ್ಗಿಹೋಗಿ ಸರ್ವೇಶ್ವರನಿಗೆ ಮೊರೆಯಿಟ್ಟರು.</verse>
				<verse number="7">ಹೀಗೆ ಮಿದ್ಯಾನ್ಯರ ಕಾಟವನ್ನು ತಾಳಲಾಗದೆ ಇಸ್ರಯೇಲರು ಮೊರೆಯಿಟ್ಟಾಗ ಸರ್ವೇಶ್ವರ ಅವರಿಗೊಬ್ಬ ಪ್ರವಾದಿಯನ್ನು ಕಳುಹಿಸಿದರು.</verse>
				<verse number="8">ಅವನು ಬಂದು ಇಸ್ರಯೇಲರಿಗೆ ಹೀಗೆಂದನು: “ನಿಮ್ಮ ದೇವರಾದ ಸರ್ವೇಶ್ವರ ಹೇಳುವ ಈ ಮಾತುಗಳನ್ನು ಗಮನಿಸಿರಿ: ‘ನೀವು ದಾಸತ್ವದಲ್ಲಿದ್ದಾಗ ನಿಮ್ಮನ್ನು ಈಜಿಪ್ಟಿನಿಂದ ಕರೆತಂದವನು ನಾನು.</verse>
				<verse number="9">ಈಜಿಪ್ಟಿನವರಿಂದ ನಿಮ್ಮನ್ನು ಬಿಡಿಸಿದೆನಲ್ಲದೆ ಬೇರೆ ಎಲ್ಲಾ ಶೋಷಕರಿಂದ ನಿಮ್ಮನ್ನು ಪಾರುಮಾಡಿ, ನಿಮ್ಮ ಕಣ್ಮುಂದೆಯೇ ಅವರನ್ನು ಅಟ್ಟಿಬಿಟ್ಟು, ಅವರ ನಾಡನ್ನು ನಿಮಗೆ ಕೊಟ್ಟೆ.</verse>
				<verse number="10">ಸರ್ವೇಶ್ವರನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯೆ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆ. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ’.”</verse>
				<verse number="11">ಆಮೇಲೆ ಸರ್ವೇಶ್ವರನ ದೂತನು ಬಂದು ಒಫ್ರದಲ್ಲಿದ್ದ ಓಕ್ ಮರದ ಅಡಿಯಲ್ಲಿ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.</verse>
				<verse number="12">ಸರ್ವೇಶ್ವರನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಸರ್ವೇಶ್ವರ ನಿನ್ನೊಡನೆ ಇದ್ದಾರೆ” ಎಂದನು.</verse>
				<verse number="13">ಆಗ ಗಿದ್ಯೋನನು ಅವನಿಗೆ, “ಸ್ವಾಮೀ, ಸರ್ವೇಶ್ವರ ನನ್ನೊಡನೆ ಇದ್ದರೆ ನಮಗೆ ಇದೆಲ್ಲಾ ಏಕೆ ಸಂಭವಿಸಿತು? ನಮ್ಮ ಹಿರಿಯರು, ಸರ್ವೇಶ್ವರ ಅದ್ಭುತಗಳನ್ನು ನಡಿಸಿ ತಮ್ಮನ್ನು ಈಜಿಪ್ಟಿನಿಂದ ಬಿಡಿಸಿದರೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಅವರು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾರಲ್ಲಾ,” ಎನ್ನಲು,</verse>
				<verse number="14">ಸರ್ವೇಶ್ವರ ಅವನನ್ನು ದಿಟ್ಟಿಸಿ ನೋಡಿ, “ನಾನು ನಿನ್ನನ್ನು ಕಳುಹಿಸುತ್ತೇನೆ, ಹೋಗು; ಈ ನಿನ್ನ ಬಲದಿಂದ ಇಸ್ರಯೇಲರನ್ನು ಮಿದ್ಯಾನ್ಯರಿಂದ ಬಿಡಿಸು,” ಎಂದು ಹೇಳಿದರು.</verse>
				<verse number="15">ಆಗ ಗಿದ್ಯೋನನು, “ಸ್ವಾಮೀ, ನಾನು ಇಸ್ರಯೇಲರನ್ನು ರಕ್ಷಿಸುವುದು ಹೇಗೆ? ಮನಸ್ಸೆ ಕುಲದಲ್ಲಿ ನನ್ನ ಮನೆ ಕನಿಷ್ಠವಾದದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು,” ಎಂದನು.</verse>
				<verse number="16">ಸರ್ವೇಶ್ವರ ಅವನಿಗೆ, “ನಾನು ನಿನ್ನೊಂದಿಗೆ ಇರುವುದರಿಂದ ನೀನು ಮಿದ್ಯಾನ್ಯರೆಲ್ಲರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸದೆಬಡಿಯುವೆ,” ಎಂದರು.</verse>
				<verse number="17">ಗಿದ್ಯೋನನು: “ಸ್ವಾಮೀ, ದಯವಿರಲಿ; ನನ್ನೊಂದಿಗೆ ಮಾತಾಡುತ್ತಿರುವ ತಾವು ಸ್ವಾಮಿಯವರೇ ಆಗಿದ್ದೀರೆಂಬುದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು.</verse>
				<verse number="18">ನಾನು ಹೋಗಿ ತಮಗೆ ಕಾಣಿಕೆಯನ್ನು ತೆಗೆದುಕೊಂಡು ಬರುವವರೆಗೆ ತಾವು ಈ ಸ್ಥಳವನ್ನು ಬಿಡಬಾರದು,” ಎಂದು ಬಿನ್ನವಿಸಲು ಅವರು, “ನೀನು ತಿರುಗಿ ಬರುವವರೆಗೆ ನಾನು ಇಲ್ಲೇ ಇರುವೆನು,” ಎಂದರು.</verse>
				<verse number="19">ಗಿದ್ಯೋನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ಪಕ್ವಮಾಡಿ ಹತ್ತು ಕಿಲೋಗ್ರಾಂ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಮಾಂಸವನ್ನು ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು ಎಲ್ಲವನ್ನೂ ಓಕ್ ಮರದ ಕೆಳಗೆ ಅವರ ಮುಂದೆ ತಂದಿಟ್ಟನು.</verse>
				<verse number="20">ಆಗ ದೇವದೂತನು ಅವನಿಗೆ, “ಮಾಂಸವನ್ನೂ ರೊಟ್ಟಿಗಳನ್ನೂ ಆ ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ” ಎನ್ನಲು ಅವನು ಹಾಗೆಯೇ ಮಾಡಿದನು.</verse>
				<verse number="21">ಅನಂತರ ಸರ್ವೇಶ್ವರನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು. ಸರ್ವೇಶ್ವರನ ದೂತನು ಅದೃಶ್ಯನಾದನು.</verse>
				<verse number="22">ಆತನು ಸರ್ವೇಶ್ವರನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು, “ಅಯ್ಯೋ ಸ್ವಾಮಿ, ಸರ್ವೇಶ್ವರಾ, ಸರ್ವೇಶ್ವರನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ” ಎಂದು ಕೂಗಿದನು.</verse>
				<verse number="23">ಆದರೆ ಸರ್ವೇಶ್ವರನು ಅವನಿಗೆ, “ಸಮಾಧಾನದಿಂದಿರು, ಹೆದರಬೇಡ; ನೀನು ಸಾಯುವುದಿಲ್ಲ,” ಎಂದನು.</verse>
				<verse number="24">ಗಿದ್ಯೋನನು ಅಲ್ಲೇ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿ ಅದಕ್ಕೆ ‘ಯೆಹೋವ ಷಾಲೋಮ್’ ಎಂದು ಹೆಸರಿಟ್ಟನು; ಅದು ಈವರೆಗೂ ಅಬೀಯೆಜೆರ್ ಗೋತ್ರದವರ ಒಫ್ರದಲ್ಲಿರುತ್ತದೆ.</verse>
				<verse number="25">ಅದೇ ದಿನ ರಾತ್ರಿ ಸರ್ವೇಶ್ವರ ಅವನಿಗೆ, “ನೀನು ನಿನ್ನ ತಂದೆಯ ಹೋರಿಗಳಲ್ಲಿ ಒಂದು ಚಿಕ್ಕ ಹೋರಿಯನ್ನೂ ಏಳು ವರ್ಷದ ಇನ್ನೊಂದು ಹೋರಿಯನ್ನೂ ತೆಗೆದುಕೊಂಡು ಹೋಗಿ ನಿನ್ನ ತಂದೆ ಕಟ್ಟಿರುವ ಬಾಳನ ಬಲಿಪೀಠವನ್ನು ಕೆಡವಿ ಅದರ ಬಳಿಯಲ್ಲಿರುವ ಅಶೇರವೆಂಬ ವಿಗ್ರಹಸ್ತಂಭವನ್ನು ಕಡಿದುಹಾಕು.</verse>
				<verse number="26">ಈ ಗುಡ್ಡದ ಶಿಖರದಲ್ಲಿ ಸರ್ವೇಶ್ವರನಿಗಾಗಿ ನೇಮಕವಾದ ರೀತಿಯಿಂದ ಒಂದು ಬಲಿಪೀಠವನ್ನು ಕಟ್ಟಿಸು. ನೀನು ಕಡಿದುಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ ಆ ಎರಡನೆ ಹೋರಿಯನ್ನು ದಹನ ಬಲಿಯಾಗಿ ಸಮರ್ಪಿಸು,” ಎಂದು ಹೇಳಿದರು.</verse>
				<verse number="27">ಅಂತೆಯೇ ಗಿದ್ಯೋನನು ತನ್ನ ಸೇವಕರಲ್ಲಿ ಹತ್ತು ಮಂದಿಯನ್ನು ಕರೆದುಕೊಂಡು ಹೋಗಿ, ಸರ್ವೇಶ್ವರನು ಹೇಳಿದ ಹಾಗೆ ಮಾಡಿದನು. ಆದರೆ ಅವನು ತನ್ನ ಮನೆಯವರಿಗೂ ಊರಿನವರಿಗೂ ಹೆದರಿಕೊಂಡದ್ದರಿಂದ ಅದನ್ನು ಹಗಲಿನಲ್ಲಿ ಮಾಡದೆ ರಾತ್ರಿಯಲ್ಲಿ ಮಾಡಿದನು.</verse>
				<verse number="28">ಊರಿನ ಜನರು ಬೆಳಿಗ್ಗೆ ಎದ್ದು ಬಾಳನ ಬಲಿಪೀಠ ಕೆಡವಲಾಗಿರುವುದನ್ನೂ ಅದರ ಸಮೀಪದಲ್ಲಿದ್ದ ವಿಗ್ರಹಸ್ತಂಭ ಕಡಿಯಲಾಗಿರುವುದನ್ನೂ ಹೊಸದಾಗಿ ಕಟ್ಟಿದ ಬಲಿಪೀಠದ ಮೆಲೆ ಎರಡನೆಯ ಹೋರಿ ಬಲಿಯಾದದ್ದನ್ನೂ ಕಂಡು,</verse>
				<verse number="29">“ಹೀಗೆ ಮಾಡಿದವರಾರು?” ಎಂದು ಒಬ್ಬರನ್ನೊಬ್ಬರು ವಿಚಾರಿಸಿದರು. ಯೋವಾಷನ ಮಗನಾದ ಗಿದ್ಯೋನನೇ ಎಂದು ಗೊತ್ತಾಯಿತು.</verse>
				<verse number="30">ಆ ಜನರು ಯೋವಾಷನಿಗೆ, “ನಿನ್ನ ಮಗನನ್ನು ಹೊರಗೆ ತೆಗೆದುಕೊಂಡು ಬಾ; ಅವನು ಸಾಯಬೇಕು; ಏಕೆಂದರೆ ಬಾಳನ ಬಲಿಪೀಠವನ್ನು ಕೆಡವಿ ಅದರ ಬಳಿಯಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನು ಕಡಿದುಹಾಕಿದ್ದಾನೆ,” ಎಂದರು.</verse>
				<verse number="31">ಯೋವಾಷನು ತನಗೆ ವಿರುದ್ಧವಾಗಿ ನಿಂತವರೆಲ್ಲರಿಗೆ, “ಬಾಳನ ಪರ ನೀವು ವ್ಯಾಜ್ಯಮಾಡಬೇಕೆ? ನೀವು ಅವನನ್ನು ರಕ್ಷಿಸಬೇಕೇ? ಅವನಿಗಾಗಿ ವ್ಯಾಜ್ಯಮಾಡುವವರು ಬೆಳಗಾಗುವಷ್ಟರಲ್ಲಿ ಕೊಲ್ಲಲ್ಪಡಲಿ. ಅವನು ದೇವನಾಗಿದ್ದರೆ ತನ್ನ ಬಲಿಪೀಠವನ್ನು ಕೆಡವಿಬಿಟ್ಟದ್ದಕ್ಕಾಗಿ ತಾನೇ ವ್ಯಾಜ್ಯವಾಡಲಿ,” ಎಂದನು.</verse>
				<verse number="32">ಆ ದಿವಸದಲ್ಲಿ ಅವನು, “ಬಾಳನು ತನ್ನ ಬಲಿಪೀಠವನ್ನು ಕೆಡವಿದವನೊಡನೆ ತಾನೇ ವ್ಯಾಜ್ಯ ಮಾಡಲಿ” ಎಂದು ಹೇಳಿದ್ದರಿಂದ ಗಿದ್ಯೋನನಿಗೆ ‘ಯೆರುಬ್ಬಾಳ’ ಎಂದು ಹೆಸರಾಯಿತು.</verse>
				<verse number="33">ಇಷ್ಟರಲ್ಲಿ ಮಿದ್ಯಾನ್ಯರೂ ಅಮಾಲೇಕ್ಯರೂ ಮೂಡಣದೇಶದವರೂ ಕೂಡಿ ಹೊಳೆದಾಟಿ ಬಂದು ಇಜ್ರೇಲಿನ ತಗ್ಗಿನಲ್ಲಿ ಪಾಳೆಯಮಾಡಿಕೊಂಡರು.</verse>
				<verse number="34">ಆಗ ಗಿದ್ಯೋನನು ಸರ್ವೇಶ್ವರಾತ್ಮಭರಿತನಾಗಿ ಕೊಂಬನ್ನು ಊದಲು ಅಬೀಯೆಜೆರನ ಗೋತ್ರದವರು ಬಂದು ಅವನನ್ನು ಹಿಂಬಾಲಿಸಿದರು.</verse>
				<verse number="35">ಅವನು ಉಳಿದ ಮನಸ್ಸೆಯವರ ಬಳಿಗೆ ದೂತರನ್ನು ಕಳುಹಿಸಿದ್ದನು. ಅವರೂ ಕೂಡಿಬಂದರು. ಅಶೇರ್, ಜೆಬುಲೂನ್, ನಫ್ತಾಲಿ ಕುಲಗಳವರ ಬಳಿಗೆ ದೂತರನ್ನು ಕಳುಹಿಸಲು ಅವರೂ ಬಂದು ದಂಡೆಯಾತ್ರೆಗಾಗಿ ಸೇರಿಕೊಂಡರು.</verse>
				<verse number="36">ಗಿದ್ಯೋನನು ದೇವರಿಗೆ, “ನೀವು ಹೇಳಿದಂತೆ ಇಸ್ರಯೇಲರನ್ನು ನನ್ನ ಮುಖಾಂತರ ರಕ್ಷಿಸುವಿರೋ ಇಲ್ಲವೋ ಎಂಬುದನ್ನು ತಿಳಿಯಪಡಿಸಿರಿ.</verse>
				<verse number="37">ಇಗೋ, ಕಣದಲ್ಲಿ ಕುರಿಯ ತುಪ್ಪಟವನ್ನು ಇಡುತ್ತೇನೆ; ಅದರಲ್ಲಿ ಮಾತ್ರ ಮಂಜು ಬಿದ್ದು ನೆಲವೆಲ್ಲಾ ಒಣಗಿದ್ದರೆ ನೀವು ಹೇಳಿದಂತೆಯೇ ಇಸ್ರಯೇಲರನ್ನು ನನ್ನ ಮುಖಾಂತರ ರಕ್ಷಿಸುವಿರೆಂದು ತಿಳಿಯುವೆನು,” ಎಂದು ವಿಜ್ಞಾಪಿಸಿದನು.</verse>
				<verse number="38">ಹಾಗೆಯೇ ಆಯಿತು; ಅವನು ಮರುದಿವಸ ಮುಂಜಾನೆ ಎದ್ದು ತುಪ್ಪಟವನ್ನು ಒತ್ತಿ ಹಿಂಡಲು ಮಂಜಿನ ನೀರು ಒಂದು ಬಟ್ಟಲು ತುಂಬಾ ಆಯಿತು.</verse>
				<verse number="39">ಅವನು ಪುನಃ ದೇವರಿಗೆ, “ಸ್ವಾಮೀ, ಸಿಟ್ಟಾಗಬೇಡಿ; ಇನ್ನೊಂದು ಸಾರಿ ಮಾತಾಡುತ್ತೇನೆ. ಇನ್ನು ಒಂದೇ ಸಾರಿ ಈ ತುಪ್ಪಟದಿಂದ ನಿಮ್ಮನ್ನು ಪರೀಕ್ಷಿಸುವುದಕ್ಕೆ ಅಪ್ಪಣೆಯಾಗಲಿ; ಈ ತುಪ್ಪಟ ಮಾತ್ರವೇ ಒಣಗಿದ್ದು ನೆಲದ ಮೇಲೆಲ್ಲಾ ಹನಿಬಿದ್ದಿರಲಿ,” ಎಂದನು.</verse>
				<verse number="40">ಆ ರಾತ್ರಿ ದೇವರು ಹಾಗೆಯೇ ಮಾಡಿದರು; ತುಪ್ಪಟ ಮಾತ್ರ ಒಣಗಿತ್ತು; ನೆಲದ ಮೇಲೆಲ್ಲಾ ಹನಿ ಬಿದ್ದಿತ್ತು.</verse>
			</chapter>
			<chapter number="7">
				<verse number="1">‘ಯೆರುಬ್ಬಾಳ’ ಎನಿಸಿಕೊಂಡ ಗಿದ್ಯೋನನೂ ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟುಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು. ಇವರಿಗೆ ಉತ್ತರದಿಕ್ಕಿನಲ್ಲಿ ಮೋರೆ ಗುಡ್ಡದ ಹಿಂದಿನ ತಗ್ಗಿನಲ್ಲಿ ಮಿದ್ಯಾನ್ಯರ ದಂಡಿಳಿದಿತ್ತು.</verse>
				<verse number="2">ಸರ್ವೇಶ್ವರ ಗಿದ್ಯೋನನಿಗೆ, “ನಿನ್ನ ಸಂಗಡ ಇರುವ ಜನರು ಹೆಚ್ಚು ಸಂಖ್ಯೆಯಲ್ಲಿದ್ದಾರೆ. ಇವರ ಕೈಗೆ ಮಿದ್ಯಾನ್ಯರನ್ನು ಒಪ್ಪಿಸುವುದು ನನಗೆ ಸರಿಯಾಗಿ ಕಾಣುವುದಿಲ್ಲ; ಏಕೆಂದರೆ ಹಾಗೆ ಒಪ್ಪಿಸಿಕೊಟ್ಟರೆ ಸ್ವಂತ ಶಕ್ತಿಯಿಂದಲೇ ನಮಗೆ ರಕ್ಷಣೆ ಲಭಿಸಿತು ಎಂದು ಹೆಚ್ಚಳಪಟ್ಟು ನನ್ನನ್ನು ಅಲಕ್ಷ್ಯಮಾಡಬಹುದು.</verse>
				<verse number="3">ಆದ್ದರಿಂದ ಎಲ್ಲಾ ಜನರಿಗೆ ಕೇಳಿಸುವಂತೆ, “ಭಯಬೀತರೂ ಅಂಜುಬುರುಕರೂ ಈ ಗಿಲ್ಯಾದ್ ಪರ್ವತವನ್ನು ಬಿಟ್ಟು ಮನೆಗೆ ಹೋಗಲಿ,’ ಎಂದು ಪ್ರಕಟಿಸು,” ಎಂದರು. ಹಾಗೆ ಮಾಡಲು ಇಪ್ಪತ್ತೆರಡು ಸಾವಿರ ಮಂದಿ ಹಿಂದಿರುಗಿ ಹೋದರು; ಹತ್ತು ಸಾವಿರ ಮಂದಿ ಉಳಿದರು.</verse>
				<verse number="4">ಸರ್ವೇಶ್ವರ ಪುನಃ ಗಿದ್ಯೋನನಿಗೆ, “ನಿನ್ನ ಬಳಿ ಇರುವ ಜನರು ಇನ್ನೂ ಹೆಚ್ಚಾಗಿದ್ದಾರೆ; ನೀನು ಅವರನ್ನು ಒಂದು ಹಳ್ಳಕ್ಕೆ ಕರೆದುಕೊಂಡು ಹೋಗು; ಅಲ್ಲಿ ಅವರನ್ನು ನಿನಗಾಗಿ ಆರಿಸುವೆನು. ಯಾರು ನಿನ್ನ ಸಂಗಡ ಹೋಗಬಹುದೆಂದು ಹೇಳುವೆನೋ ಅವರು ಮಾತ್ರ ಹೋಗಲಿ. ಯಾರಿಗೆ ಹೋಗಬಾರದೆಂದು ಹೇಳುವೆನೋ ಅವರು ಹೋಗದಿರಲಿ,” ಎಂದರು.</verse>
				<verse number="5">ಗಿದ್ಯೋನನು ಜನರನ್ನು ಹಳ್ಳಕ್ಕೆ ಕರೆದುಕೊಂಡು ಬಂದಾಗ ಸರ್ವೇಶ್ವರ ಅವನಿಗೆ, “ನಾಯಿಯಂತೆ ನೀರನ್ನು ನಾಲಿಗೆಯಿಂದ ನೆಕ್ಕುವವರನ್ನೂ ಮೊಣಕಾಲೂರಿ ಕುಡಿಯುವವರನ್ನೂ ಬೇರೆ ಬೇರೆಯಾಗಿ ನಿಲ್ಲಿಸು,” ಎಂದು ಹೇಳಿದರು.</verse>
				<verse number="6">ಕೈಯಿಂದ ನೀರನ್ನು ಬಾಯಿಗೆ ತೆಗೆದುಕೊಂಡು ನೆಕ್ಕಿದವರ ಸಂಖ್ಯೆ ಮುನ್ನೂರು. ಇತರ ಜನರು ಮೊಣಕಾಲೂರಿ ಕುಡಿದವರು.</verse>
				<verse number="7">ಆಗ ಸರ್ವೇಶ್ವರ ಗಿದ್ಯೋನನಿಗೆ, “ನೀರನ್ನು ನೆಕ್ಕಿದ ಆ ಮೂನ್ನೂರು ಮಂದಿಯಿಂದಲೇ ನಿಮಗೆ ಜಯವನ್ನುಂಟುಮಾಡಿ ಮಿದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ,” ಎಂದು ಆಜ್ಞಾಪಿಸಿದರು.</verse>
				<verse number="8">ಗಿದ್ಯೋನನು ಆ ಮುನ್ನೂರು ಜನರನ್ನು ಇಟ್ಟುಕೊಂಡು ಉಳಿದ ಇಸ್ರಯೇಲರನ್ನು ಅವರವರ ಗುಡಾರಗಳಿಗೆ ಕಳುಹಿಸಿದನು. ಕಳುಹಿಸುವಾಗ ಅವರ ಹತ್ತಿರ ಇದ್ದ ಆಹಾರವನ್ನೂ ಕೊಂಬುಗಳನ್ನೂ ತನ್ನ ಜನರಿಗಾಗಿ ತೆಗೆದುಕೊಂಡನು. ಮಿದ್ಯಾನ್ಯರ ದಂಡು ಕೆಳಗೆ ತಗ್ಗಿನಲ್ಲಿ ಇಳಿದುಕೊಂಡಿತ್ತು.</verse>
				<verse number="9">ಅದೇ ರಾತ್ರಿ ಸರ್ವೇಶ್ವರ ಗಿದ್ಯೋನ್ಯನಿಗೆ, “ನೀನು ಎದ್ದು ಹೋಗಿ ಶತ್ರುಗಳ ಪಾಳೆಯದ ಮೇಲೆ ಬೀಳು; ಅದನ್ನು ನಿನಗೆ ಒಪ್ಪಿಸಿಕೊಟ್ಟಿದ್ದೇನೆ.</verse>
				<verse number="10">ಅವರ ಮೇಲೆ ಬೀಳುವುದಕ್ಕೆ ಹೆದರಿಕೆಯಾದರೆ ಮೊದಲು ನಿನ್ನ ಸೇವಕನಾದ ಪುರನ ಸಂಗಡ ಅಲ್ಲಿಗೆ ಹೋಗಿ ಅವರು ಮಾತಾಡಿಕೊಳ್ಳುವುದನ್ನು ಆಲಿಸು;</verse>
				<verse number="11">ಆಗ ಅವರ ಮೇಲೆ ಬೀಳುವುದಕ್ಕೆ ನಿನಗೆ ಧೈರ್ಯ ಬರುವುದು,” ಎಂದರು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರು ಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು.</verse>
				<verse number="12">ಮಿದ್ಯಾನ್ಯರೂ ಅಮಾಲೇಕ್ಯರೂ ಪೂರ್ವದೇಶದವರೂ ಮಿಡಿತೆಗಳಂತೆ ಗುಂಪಾಗಿ ತಗ್ಗಿನಲ್ಲಿ ಇಳಿದುಕೊಂಡಿದ್ದರು. ಅವರ ಒಂಟೆಗಳು ಸಮುದ್ರತೀರದ ಮರಳಿನಂತೆ ಅಸಂಖ್ಯವಾಗಿದ್ದವು.</verse>
				<verse number="13">ಗಿದ್ಯೋನನು ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು, “ಇಗೋ, ನಾನು ಒಂದು ಕನಸು ಕಂಡೆ; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿ ಉರುಳುತ್ತಾ ಮಿದ್ಯಾನ್ಯರ ಪಾಳೆಯದೊಳಗೆ ಬಂದು ಒಂದು ಡೇರೆಗೆ ತಗಲಿ ಅದನ್ನು ಅಡಿಮೇಲು ಮಾಡಿ ಬೀಳಿಸಿಬಿಟ್ಟಿತು,” ಎಂದು ಹೇಳಿದನು. ಅವನ ಜೊತೆಗಾರನು,</verse>
				<verse number="14">“ಇದು ಇಸ್ರಯೇಲನಾದ ಯೋವಾಷನ ಮಗ ಗಿದ್ಯೋನನ ಕತ್ತಿಯೇ ಹೊರತು ಮತ್ತೊಂದಲ್ಲ; ದೇವರು ಮಿದ್ಯಾನ್ಯರನ್ನೂ ಅವರ ಪಾಳೆಯಗಳನ್ನೂ ಅವನ ಕೈಗೆ ಒಪ್ಪಿಸಿರುವರು,” ಎಂದನು.</verse>
				<verse number="15">ಗಿದ್ಯೋನನು ಆ ಕನಸನ್ನೂ ಅದರ ಅರ್ಥವನ್ನೂ ಕೇಳಿದಾಗ ಸರ್ವೇಶ್ವರನಿಗೆ ಅಡ್ಡಬಿದ್ದು ಇಸ್ರಯೇಲರ ಪಾಳೆಯಕ್ಕೆ ಹಿಂದಿರುಗಿ ಬಂದು, ಅವರಿಗೆ, “ಏಳಿ, ಸರ್ವೇಶ್ವರ ಮಿದ್ಯಾನ್ಯರ ಪಾಳೆಯವನ್ನು ನಿಮ್ಮ ಕೈಗೆ ಒಪ್ಪಿಸಿದ್ದಾರೆ,” ಎಂದನು.</verse>
				<verse number="16">ಅಲ್ಲದೆ, ಅವನು ಆ ಮುನ್ನೂರು ಮಂದಿಯನ್ನು ಮೂರು ಗುಂಪುಮಾಡಿ ಪ್ರತಿ ಒಬ್ಬನ ಕೈಯಲ್ಲಿ ಕೊಂಬನ್ನೂ ಉರಿಯುವ ಪಂಜಡಗಿರುವ ಬರಿಕೊಡವನ್ನೂ ಕೊಟ್ಟು ಅವರಿಗೆ,</verse>
				<verse number="17">“ನನ್ನನ್ನೇ ನೋಡುತ್ತಾ ನಾನು ಮಾಡುವ ಹಾಗೆ ಮಾಡಿ. ನಾನು ಪಾಳೆಯದ ಅಂಚಿಗೆ ಬಂದಾಗ ಹೇಗೆ ಮಾಡುತ್ತೇನೋ ಹಾಗೆ ನೀವು ಮಾಡಬೇಕು.</verse>
				<verse number="18">ನಾನೂ ನನ್ನ ಸಂಗಡಿಗರೂ ಕೊಂಬುಗಳನ್ನು ಊದುವಾಗ ನೀವೂ ಪಾಳೆಯದ ಸುತ್ತಲೂ ಕೊಂಬನ್ನು ಊದಿ, ‘ಸರ್ವೇಶ್ವರಗೆ ಜಯ, ಗಿದ್ಯೋನನಿಗೆ ಜಯ’ ಎಂದು ಕೂಗಿರಿ,” ಎಂದು ಹೇಳಿದನು.</verse>
				<verse number="19">ಮಧ್ಯರಾತ್ರಿ ಪ್ರಾರಂಭವಾಗುತ್ತಿದ್ದಂತೆ ಮೊದಲ ಕಾವಲುಗಾರರು ಬದಲಾದ ಕೂಡಲೆ ಗಿದ್ಯೋನನು ಮತ್ತು ಅವನ ಸಂಗಡ ಇದ್ದ ನೂರುಮಂದಿ (ಶತ್ರುಗಳ) ಪಾಳೆಯದ ಅಂಚಿಗೆ ಬಂದು ಕೊಂಬುಗಳನ್ನು ಊದಿ, ಕೈಯಲ್ಲಿದ್ದ ಕೊಡಗಳನ್ನು ಒಡೆದುಬಿಟ್ಟರು.</verse>
				<verse number="20">ಕೂಡಲೆ ಮೂರು ಗುಂಪಿನವರೂ ಕೊಂಬುಗಳನ್ನು ಊದಿ, ಕೊಡಗಳನ್ನು ಒಡೆದುಬಿಟ್ಟು ಎಡಗೈಯಲ್ಲಿ ಪಂಜುಗಳನ್ನೂ ಬಲಗೈಯಲ್ಲಿ ಊದುವ ಕೊಂಬುಗಳನ್ನೂ ಹಿಡಿದು, “ಸರ್ವೇಶ್ವರನಿಗೆ ಪರಾಕು” ಎಂದು ಕೂಗಿ</verse>
				<verse number="21">ಪಾಳೆಯದ ಸುತ್ತಲೂ ತಮ್ಮ ತಮ್ಮ ಸ್ಥಳದಲ್ಲಿ ನಿಂತರು. ಪಾಳೆಯದವರಾದರೋ ಗಲಿಬಿಲಿಗೊಂಡು ಚೀರುತ್ತಾ ಓಡಿಹೋಗಲು ಆರಂಭಿಸಿದರು.</verse>
				<verse number="22">ಆ ಮುನ್ನೂರು ಮಂದಿ ಕೊಂಬುಗಳನ್ನು ಊದುತ್ತಿರುವಲ್ಲಿ ಪಾಳೆಯದವರು ಒಬ್ಬರನ್ನೊಬ್ಬರು ಹತಮಾಡಿಕೊಳ್ಳುವಂತೆ ಸರ್ವೇಶ್ವರ ಮಾಡಿದರು. ಪಾಳೆಯದವರು ಚೇರೆರದ ದಾರಿಯಲ್ಲಿರುವ ಬೇತ್‍ಷೀಟ್ಟದವರೆಗೂ ಟಬ್ಬಾತಿನ ಬಳಿಯಲ್ಲಿರುವ ಆಬೇಲ್ಮೆಹೋಲಾ ಪ್ರಾಂತ್ಯದವರೆಗೂ ಓಡಿಹೋದರು.</verse>
				<verse number="23">ಇಸ್ರಯೇಲರಾದ ನಫ್ತಾಲಿ, ಆಶೇರ್ ಕುಲಗಳವರೂ ಮನಸ್ಸೆಕುಲದ ಜನರೆಲ್ಲರೂ ಕೂಡಿಬಂದು ಮಿದ್ಯಾನ್ಯರನ್ನು ಹಿಂದಟ್ಟಿದರು.</verse>
				<verse number="24">ಇದಲ್ಲದೆ, ಗಿದ್ಯೋನನು ಎಫ್ರಯಿಮ್ ಪರ್ವತ ಪ್ರದೇಶಗಳಿಗೆ ದೂತರನ್ನು ಅಟ್ಟಿ ಆ ಜನರಿಗೆ, “ನೀವು ಮಿದ್ಯಾನ್ಯರಿಗೆ ವಿರೋಧವಾಗಿ ಹೊರಟು, ಅವರು ಬೇತ್ ಬಾರದವರೆಗಿರುವ ಪ್ರವಾಹಗಳನ್ನೂ ಜೋರ್ಡನ್ ನದಿಯನ್ನೂ ದಾಟಿಹೋಗದಂತೆ ಅಡ್ಡಗಟ್ಟಿರಿ,” ಎಂದು ಹೇಳಿಕಳಿಸಿದನು. ಆಗ ಎಫ್ರಯಿಮ್ಯರೆಲ್ಲರೂ ಬೇತ್‍ಬಾರದವರೆಗಿರುವ ಪ್ರವಾಹಗಳಿಗೂ ಜೋರ್ಡನ್ ನದಿಗೂ ಬಂದು ಅವುಗಳ ಹಾಯಗಡಗಳನ್ನೆಲ್ಲಾ ಹಿಡಿದರು.</verse>
				<verse number="25">ಇದಲ್ಲದೆ ಅವರು ಮಿದ್ಯಾನ್ಯರ ನಾಯಕರಾದ ಓರೇಬ್, ಜೇಬ್ ಎಂಬವರನ್ನು ಹಿಡಿದು ಓರೇಬನನ್ನು ಓರೇಬನ ಬಂಡೆಯ ಮೇಲೂ ಜೇಬನನ್ನು ಜೇಬನ ದ್ರಾಕ್ಷಿಯ ಆಲೆಯಲ್ಲೂ ಕೊಂದು ಅವರ ತಲೆಗಳನ್ನು ತೆಗೆದುಕೊಂಡು ಮಿದ್ಯಾನ್ಯರನ್ನು ಹಿಂದಟ್ಟುತ್ತಾ ಜೋರ್ಡನಿನ ಆಚೆಗೆ ಹೋಗಿ ಅಲ್ಲಿದ್ದ ಗಿದ್ಯೋನನಿಗೆ ಅವುಗಳನ್ನು ಒಪ್ಪಿಸಿದರು.</verse>
			</chapter>
			<chapter number="8">
				<verse number="1">ಅನಂತರ ಎಫ್ರಯಿಮ್ಯರು ಗಿದ್ಯೋನನಿಗೆ, “ನೀನು ಹೀಗೇಕೆ ಮಾಡಿದೆ? ಮಿದ್ಯಾನ್ಯರೊಡನೆ ಯುದ್ಧ ಮಾಡುವುದಕ್ಕೆ ಹೊರಟಾಗ ನಮ್ಮನ್ನೇಕೆ ಕರೆಯಲಿಲ್ಲ?” ಎಂದು ಉಗ್ರ ವಾಗ್ವಾದ ಮಾಡಿದರು.</verse>
				<verse number="2">ಆಗ ಅವನು ಅವರಿಗೆ, “ನೀವು ಮಾಡಿದ ಕಾರ್ಯಕ್ಕೆ ಸರಿಸಮಾನ ಆದದ್ದನ್ನು ನಾನೇನು ಮಾಡಿದೆ? ಅಭೀಯಿಜೆರನವರು ಸುಗ್ಗಿಯಲ್ಲಿ ಕೂಡಿಸಿದ್ದಕ್ಕಿಂತಲೂ ಎಫ್ರಯಿಮ್ಯರು ಹಕ್ಕಲಾಯ್ದು ಕೂಡಿಸಿದ್ದು ಹೆಚ್ಚಾಗಿದೆಯಲ್ಲವೇ?</verse>
				<verse number="3">ದೇವರು ಮಿದ್ಯಾನ್ಯರ ನಾಯಕರಾದ ಓರೇಬ್ ಮತ್ತು ಜೇಬರನ್ನೇ ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾರಲ್ಲವೆ; ಇದಕ್ಕೆ ಸರಿಸಮಾನವಾದದ್ದನ್ನು ನಾನೇನು ಮಾಡಿದ್ದೇನೆ? ಎಂದನು. ಈ ಮಾತುಗಳನ್ನು ಕೇಳಿದ ಮೇಲೆ ಅವರ ಸಿಟ್ಟಿಳಿಯಿತು.</verse>
				<verse number="4">ಗಿದ್ಯೋನನೂ ಅವನ ಸಂಗಡ ಇದ್ದ ಮುನ್ನೂರು ಮಂದಿಯೂ ಬಹಳ ದಣಿದಿದ್ದರು. ಆದರೂ ಹಿಂದಟ್ಟುತ್ತಾ ಜೋರ್ಡನನ್ನು ದಾಟಿ ಸುಖೋತಿಗೆ ಬಂದರು.</verse>
				<verse number="5">ಗಿದ್ಯೋನನು ಸುಖೋತಿನವರಿಗೆ, “ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಸ್ವಲ್ಪ ರೊಟ್ಟಿ ಕೊಡಿ. ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಹಿಂದಟ್ಟುತ್ತಾ ಇದ್ದೇನೆ,” ಎಂದನು.</verse>
				<verse number="6">ಆದರೆ ಸುಖೋತಿನ ಮುಖಂಡರು ಅವನಿಗೆ, “ನಾವು ನಿನ್ನ ಸೈನಿಕರಿಗೆ ರೊಟ್ಟಿಕೊಡುವುದಕ್ಕೆ ಜೆಬಹ ಮತ್ತು ಚಲ್ಮುನ್ನ ಎಂಬರವರನ್ನು ಕೈಕಟ್ಟಿ ವಶಮಾಡಿಕೊಂಡಿದ್ದೀಯೋ?”, ಎಂದು ತಿರಸ್ಕರಿಸಿದರು.</verse>
				<verse number="7">ಆಗ ಗಿದ್ಯೋನನು ಅವರಿಗೆ, “ಒಳ್ಳೆಯದು, ಸರ್ವೇಶ್ವರ ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟ ತರುವಾಯ ನಾನು ನಿಮ್ಮನ್ನು ಜಾಲಿ ಮುಳ್ಳುಗಳಿಂದಲೂ ಕಾರೆಗಿಡಗಳಿಂದಲೂ ಹೊಡಿಸುವೆನು,” ಎಂದು ಹೇಳಿದನು.</verse>
				<verse number="8">ಅವನು ಅಲ್ಲಿಂದ ಪೆನೂವೇಲಿಗೆ ಬಂದು ಅಲ್ಲಿನ ಜನರನ್ನು ಅದೇ ಪ್ರಕಾರ ಬಿನ್ನವಿಸಲು ಅವರೂ ಸುಖೋತಿನವರಂತೆಯೇ ತಾತ್ಸಾತ ಮಾಡಿದರು.</verse>
				<verse number="9">ಗಿದ್ಯೋನನು ಅವರಿಗೆ, “ನಾನು ಸುರಕ್ಷಿತವಾಗಿ ಹಿಂದಿರುಗಿ ಬಂದಾಗ ಈ ಗೋಪುರವನ್ನು ಕೆಡವಿಬಿಡುವೆನು,” ಎಂದನು.</verse>
				<verse number="10">ಜೆಬಹ ಮತ್ತು ಚಲ್ಮುನ್ನ ಎಂಬವರು ಸುಮಾರು ಹದಿನೈದು ಸಾವಿರ ಮಂದಿ ಸೈನಿಕರೊಡನೆ ಕರ್ಕೋರಿನಲ್ಲಿ ಇಳಿದುಕೊಂಡಿದ್ದರು. ಪೂರ್ವದೇಶದವರ ಸೈನ್ಯದಲ್ಲಿ ಲಕ್ಷದ ಇಪ್ಪತ್ತು ಸಾವಿರ ಯೋಧರು ಹತರಾಗಿ ಉಳಿದವರು ಇಷ್ಟೇ ಮಂದಿ.</verse>
				<verse number="11">ಗಿದ್ಯೋನನು ಕಾಡುಗೊಲ್ಲರ ಪ್ರದೇಶ ಮಾರ್ಗವಾಗಿ ನೋಬಹ, ಯೊಗ್ಬೆಹಾ ಇವುಗಳ ಪೂರ್ವದಿಕ್ಕಿಗೆ ಹೋಗಿ ನಿರ್ಭಯದಿಂದ ಇಳಿದುಕೊಂಡಿದ್ದ ಆ ಪಾಳೆಯದ ಮೇಲೆ ದಾಳಿಮಾಡಿದನು.</verse>
				<verse number="12">ಜೆಬಹನೂ ಚಲ್ಮುನ್ನನೂ ಓಡಿಹೋಗುವಾಗ ಅವರನ್ನು ಹಿಂದಟ್ಟಿ ಹಿಡಿದು ಅವರ ಸೈನ್ಯವನ್ನು ಚದರಿಸಿಬಿಟ್ಟನು.</verse>
				<verse number="13">ಯೋವಾಷನ ಮಗನಾದ ಗಿದ್ಯೋನನು ಯುದ್ಧದಿಂದ ಹೆರೆಸಿನ ಗಟ್ಟದ ಮಾರ್ಗವಾಗಿ ಹಿಂದಿರುಗಿ ಬಂದನು.</verse>
				<verse number="14">ಸುಖೋತಿನ ಒಬ್ಬ ಯೌವನಸ್ಥನನ್ನು ಹಿಡಿದು ಆ ಊರಿನ ಮುಖಂಡರೂ ಹಿರಿಯರೂ ಯಾರಾರೆಂದು ವಿಚಾರಿಸಿ ಎಪ್ಪತ್ತೇಳು ಮಂದಿಯ ಹೆಸರುಗಳನ್ನು ಬರೆಸಿಕೊಂಡನು.</verse>
				<verse number="15">ಅನಂತರ ಅವನು ಸುಖೋತಿನವರ ಬಳಿಗೆ ಹೋಗಿ ಅವರಿಗೆ, “’ದಣಿದಿರುವ ನಿನ್ನ ಸೈನಿಕರಿಗಾಗಿ ನಾವು ರೊಟ್ಟಿ ಕೊಡುವುದಕ್ಕೆ ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಕೈಕಟ್ಟಿ ಸ್ವಾಧೀನ ಮಾಡಿಕೊಂಡಿದ್ದೀಯೋ?,’ ಎಂದು ನನ್ನನ್ನು ನಿಂದಿಸಿದಿರಲ್ಲವೆ;</verse>
				<verse number="16">ನೋಡಿ, ಅವರು ಇಲ್ಲಿರುತ್ತಾರೆ” ಎಂದು ಊರಿನ ಹಿರಿಯರನ್ನೂ ಮುಖಂಡರನ್ನೂ ಜಾಲಿಮುಳ್ಳು ಹಾಗು ಕಾರೆ ಗಿಡಗಳಿಂದಲೂ ಹೊಡಿಸಿ ಸುಖೋತಿನವರಿಗೆ ಬುದ್ಧಿ ಕಲಿಸಿದನು.</verse>
				<verse number="17">ಮತ್ತು ಪೆನೂವೇಲಿನ ಗೋಪುರವನ್ನು ಕೆಡವಿ ಬಿಟ್ಟು ಆ ಊರಿನ ಜನರನ್ನು ಕೊಂದುಹಾಕಿದನು.</verse>
				<verse number="18">ಬಳಿಕ ಗಿದ್ಯೋನನು ಜೆಬಹ ಮತ್ತು ಚಲ್ಮುನ್ನ ಎಂಬವರನ್ನು, “ನೀವು ತಾಬೋರದಲ್ಲಿ ಕೊಂದು ಹಾಕಿದ ವ್ಯಕ್ತಿಗಳು ಹೇಗಿದ್ದರು?” ಎಂದು ಕೇಳಿದಾಗ ಅವರು ಅವನಿಗೆ, “ನಿನ್ನ ಹಾಗೆಯೇ ಇದ್ದರು; ಎಲ್ಲರೂ ರೂಪದಲ್ಲಿ ರಾಜಪುತ್ರರಂತಿದ್ದರು,” ಎಂದು ಉತ್ತರಕೊಟ್ಟರು.</verse>
				<verse number="19">ಆಗ ಅವನು, “ಅವರು ನನ್ನ ತಾಯಿಯ ಮಕ್ಕಳು; ನನ್ನ ಸಹೋದರರು; ಸರ್ವೇಶ್ವರನ ಆಣೆ, ನೀವು ಅವರನ್ನು ಉಳಿಸಿದ್ದರೆ ನಾನು ನಿಮ್ಮನ್ನು ಕೊಲ್ಲುತ್ತಿರಲಿಲ್ಲ,” ಎಂದು ಹೇಳಿ</verse>
				<verse number="20">ತನ್ನ ಹಿರಿಯ ಮಗನಾದ ಎತೆರನಿಗೆ, “ನೀನೆದ್ದು ಇವರನ್ನು ಕೊಂದುಹಾಕು,” ಎಂದನು. ಆದರೆ ಅವನು ಇನ್ನೂ ಹುಡುಗನಾಗಿದ್ದುದರಿಂದ ಭಯಪಟ್ಟು ಕತ್ತಿಯನ್ನು ಹಿರಿಯಲೇ ಇಲ್ಲ.</verse>
				<verse number="21">ಆಗ ಜೆಬಹನು ಹಾಗು ಚಲ್ಮುನ್ನನು ಗಿದ್ಯೋನನಿಗೆ, “ನೀನೇ ಎದ್ದು ಬಂದು ನಮ್ಮ ಮೇಲೆ ಬೀಳು; ಪ್ರಾಯಕ್ಕೆ ತಕ್ಕಂತೆ ಪುರುಷನಿಗೆ ಬಲವಿರುತ್ತದೆ ಅಲ್ಲವೆ?” ಎನ್ನಲು ಅವನೆದ್ದು ಜೆಬಹ ಮತ್ತು ಚಲ್ಮುನ್ನ ಎಂಬವರನ್ನು ಕೊಂದುಹಾಕಿ ಅವರ ಒಂಟೆಗಳ ಕೊರಳಲ್ಲಿದ್ದ ಅರ್ಧಚಂದ್ರಾಕಾರದ ಆಭರಣಗಳನ್ನು ತೆಗೆದುಕೊಂಡನು.</verse>
				<verse number="22">ತರುವಾಯ ಇಸ್ರಯೇಲರು ಗಿದ್ಯೋನನಿಗೆ, “ನೀನು ನಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದ್ದೀಯಲ್ಲವೇ? ನೀನೂ ನಿನ್ನ ಮಗನೂ ಮೊಮ್ಮಗನೂ ವಂಶಪಾರಂಪರ್ಯವಾಗಿ ನಮ್ಮ ಮೇಲೆ ಅರಸರಾಗಿರಬೇಕು,” ಎಂದರು.</verse>
				<verse number="23">ಅವನು ಅವರಿಗೆ, “ನಾನಾಗಲಿ, ನನ್ನ ಮಗನಾಗಲಿ ನಿಮ್ಮನ್ನು ಆಳುವುದಿಲ್ಲ; ಸರ್ವೇಶ್ವರನೇ ನಿಮ್ಮ ಅರಸ.</verse>
				<verse number="24">ಆದರೆ ನಿಮ್ಮಲ್ಲಿ ನನ್ನದೊಂದು ಬಿನ್ನಹಃ ಪ್ರತಿಯೊಬ್ಬನು ತಾನು ಕೊಳ್ಳೆಹೊಡೆದ ಮುರುವುಗಳನ್ನು ನನಗೆ ಕೊಡಲಿ,” ಎಂದನು. ಮಿದ್ಯಾನ್ಯರು ಇಷ್ಮಾಯೇಲ್ಯರಾಗಿದ್ದುದರಿಂದ ಬಂಗಾರದ ಮುರುವುಗಳನ್ನು ಹಾಕಿಕೊಳ್ಳುತ್ತಿದ್ದರು.</verse>
				<verse number="25">ಗಿದ್ಯೋನಿನ ಬಿನ್ನಹಕ್ಕೆ ಇಸ್ರಯೇಲರು, “ನಾವು ಸಂತೋಷದಿಂದ ಕೊಡುತ್ತೇವೆ,” ಎಂದು ಹೇಳಿ ಅಲ್ಲಿ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ತಾವು ಕೊಳ್ಳೆಯಾಗಿ ತಂದ ಮುರುವುಗಳನ್ನು ಇಟ್ಟರು.</verse>
				<verse number="26">ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ಮಿದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ ಇವುಗಳ ಹೊರತಾಗಿ ಅವನು ಇಸ್ರಯೇಲರಿಂದ ಕೇಳಿ ತೆಗೆದುಕೊಂಡ ಮುರುವುಗಳ ಬಂಗಾರವೇ 20 ಕಿಲೋಗ್ರಾಂ ತೂಕವಾಗಿತ್ತು.</verse>
				<verse number="27">ಈ ಬಂಗಾರದಿಂದ ಗಿದ್ಯೋನನು ಒಂದು ‘ಏಫೋದ’ನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಅದನ್ನು ಪೂಜಿಸುತ್ತಿದ್ದುದರಿಂದ ಇಸ್ರಯೇಲರೆಲ್ಲರೂ ದೇವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಒಂದು ಉರುಲು ಆಯಿತು.</verse>
				<verse number="28">ಮಿದ್ಯಾನ್ಯರು ಇಸ್ರಯೇಲರ ಮುಂದೆ ಬಹಳವಾಗಿ ತಗ್ಗಿಹೋದರು. ಅವರು ಮರಳಿ ತಲೆಯೆತ್ತಲಾಗಲಿಲ್ಲ. ಗಿದ್ಯೋನನ ಜೀವಮಾನದಲ್ಲಿ ನಾಲ್ವತ್ತು ವರ್ಷಗಳ ಕಾಲಪರ್ಯಂತ ದೇಶದಲ್ಲಿ ಶಾಂತಿಸಮಾಧಾನವಿತ್ತು.</verse>
				<verse number="29">ಯೋವಾಷನ ಮಗ ‘ಯೆರುಬ್ಬಾಳ’ನು ಹೋಗಿ ತನ್ನ ಮನೆಯಲ್ಲಿ ವಾಸವಾಗಿದ್ದನು.</verse>
				<verse number="30">ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರು ಇದ್ದರು. ಅವನಿಗೆ ಎಪ್ಪತ್ತು ಮಂದಿ ಗಂಡು ಮಕ್ಕಳು ಹುಟ್ಟಿದರು.</verse>
				<verse number="31">ಅವನಿಗೆ ಶೆಕೆಮಿನಲ್ಲಿ ಇದ್ದ ತನ್ನ ಉಪಪತ್ನಿಯಲ್ಲಿ ಇನ್ನೊಬ್ಬ ಮಗ ಹುಟ್ಟಿದನು. ಅವನಿಗೆ ಅಬೀಮೆಲೆಕನೆಂದು ಹೆಸರಿಟ್ಟನು.</verse>
				<verse number="32">ಯೋವಾಷನ ಮಗನಾದ ಗಿದ್ಯೋನನು ಹಣ್ಣು ಹಣ್ಣು ಮುದುಕನಾಗಿ ಮರಣಹೊಂದಲು ಅವನ ಶವವನ್ನು ಅಬೀಯೆಜೆರೀಯರ ಒಫ್ರದಲ್ಲಿದ್ದ ಒಂದು ಸಮಾಧಿಯಲ್ಲಿ ಹೂಣಿಟ್ಟರು. ಆ ಸಮಾಧಿ ಅವನ ತಂದೆ ಆದ ಯೋವಾಷನದಾಗಿತ್ತು.</verse>
				<verse number="33">ಗಿದ್ಯೋನನು ಸತ್ತನಂತರ ಇಸ್ರಯೇಲರು ದೇವದ್ರೋಹಿಗಳಾಗಿ ಬಾಳನ ಪ್ರತಿಮೆಗಳನ್ನು ಪೂಜಿಸಿದರು; ಬಾಳ್ ಬೆರೀತನನ್ನು ತಮ್ಮ ದೇವರನ್ನಾಗಿ ಮಾಡಿಕೊಂಡರು.</verse>
				<verse number="34">ಸುತ್ತಮುತ್ತಲಿನ ಶತ್ರುಗಳಿಂದ ತಮ್ಮನ್ನು ಬಿಡಿಸಿದ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟರು.</verse>
				<verse number="35">ಯೆರುಬ್ಬಾಳನೆಂಬ ಗಿದ್ಯೋನನು ತಮಗೆ ಮಾಡಿದ ಉಪಕಾರಗಳನ್ನು ಸ್ಮರಿಸಲಿಲ್ಲ; ಅವನ ಮನೆಯವರಿಗೆ ದಯೆತೋರಿಸಲಿಲ್ಲ.</verse>
			</chapter>
			<chapter number="9">
				<verse number="1">‘ಯೆರುಬ್ಬಾಳ’ನ ಮಗ ಅಬೀಮೆಲೆಕನು ಶೆಕೆಮಿಗೆ ಹೋಗಿ ತನ್ನ ಸೋದರ ಮಾವಂದಿರಿಗೂ ತಾಯಿಯ ಬಂಧುಗಳೆಲ್ಲರಿಗೂ,</verse>
				<verse number="2">“ನೀವು ದಯವಿಟ್ಟು ಶೆಕೆಮಿನ ಹಿರಿಯರೊಡನೆ ಮಾತಾಡಬೇಕು. ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವುದು ಒಳ್ಳೆಯದೋ ಅಥವಾ ಒಬ್ಬನೇ ಆಳುವುದು ಮೇಲೋ? ಎಂದು ಅವರನ್ನು ವಿಚಾರಿಸಬೇಕು; ನಾನು ಅವರ ರಕ್ತಸಂಬಂಧಿಯಾಗಿದ್ದೇನೆಂಬುದನ್ನು ಜ್ಞಾಪಕಪಡಿಸಬೇಕು” ಎಂದು ಕೇಳಿಕೊಂಡನು.</verse>
				<verse number="3">ಅವರು ಶೆಕೆಮಿನ ಹಿರಿಯರ ಬಳಿಗೆ ಹೋಗಿ ಅಬೀಮೆಲೆಕನ ವಿಷಯದಲ್ಲಿ ಹಾಗೆಯೇ ಹೇಳಿದರು. ಅವರು, “ಇವನು ನಮ್ಮ ಸಹೋದರನಾಗಿದ್ದಾನಲ್ಲವೆ” ಎಂದುಕೊಂಡು ಅವನ ಪಕ್ಷವಹಿಸಲು ಒಪ್ಪಿಕೊಂಡರು.</verse>
				<verse number="4">ಅದು ಮಾತ್ರವಲ್ಲ, ಬಾಳ್ ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ಬೆಳ್ಳಿನಾಣ್ಯಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಮಂದಿ ಪುಂಡಪೋಕರಿಗಳನ್ನು ಕೂಡಿಸಿ, ಅವರ ನಾಯಕನಾಗಿ ಹೊರಟು,</verse>
				<verse number="5">ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ, ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನು ಅವಿತುಕೊಂಡು ತನ್ನ ಜೀವವನ್ನು ಉಳಿಸಿಕೊಂಡನು.</verse>
				<verse number="6">ತರುವಾಯ ಎಲ್ಲಾ ಶೆಕೆಮಿನವರೂ ಹಾಗು ಮಿಲ್ಲೋ ಕೋಟೆಯವರೂ ಶೆಕೆಮಿನ ಬಳಿಯಲ್ಲಿ ಸ್ಮಾರಕಸ್ತಂಭವಿರುವ ಓಕ್ ಮರದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಮಾಡಿಕೊಂಡರು.</verse>
				<verse number="7">ಯೋತಾಮನು ಇದನ್ನು ಕೇಳಿ, ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ ಹೀಗೆಂದನು: “ಶೆಕೆಮಿನ ಜನರೇ, ನನ್ನ ಮಾತಿಗೆ ಕಿವಿಗೊಡಿ; ಆಗ ದೇವರೂ ನಿಮ್ಮ ಮೊರೆಗೆ ಕಿವಿಗೊಡುವರು:</verse>
				<verse number="8">“ಒಮ್ಮೆ ಮರಗಳು ತಮಗೆ ಒಬ್ಬ ಅರಸನನ್ನು ಅಭಿಷೇಕಿಸಬೇಕೆಂದು ಹೊರಟು ಓಲಿವ್ ಮರದ ಬಳಿಗೆ ಬಂದು, ‘ನೀನು ನಮಗೆ ಅರಸನಾಗು,’ ಎಂದವು.</verse>
				<verse number="9">ಅದು ಅವುಗಳಿಗೆ, ‘ನನ್ನಲ್ಲಿರುವ ಎಣ್ಣೆಯಿಂದ ದೇವತೆಗಳೂ ಮಾನವರೂ ಘನತೆ ಗೌರವಗಳನ್ನು ಪಡೆಯುತ್ತಾರೆ. ಇದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೊ?’ ಎಂದಿತು.</verse>
				<verse number="10">“ಬಳಿಕ ಆ ಮರಗಳು ಅಂಜೂರದ ಗಿಡದ ಬಳಿಗೆ ಹೋಗಿ ಅದಕ್ಕೆ, “ನೀನು ಬಂದು ನಮ್ಮ ಅರಸನಾಗು,’ ಎಂದವು.</verse>
				<verse number="11">ಅದು, ‘ನಾನು ನನ್ನ ಶ್ರೇಷ್ಠವಾದ ಸಿಹಿಹಣ್ಣು ಕೊಡುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೊ?’ ಎಂದಿತು.</verse>
				<verse number="12">“ಅನಂತರ ಆ ಮರಗಳು ದ್ರಾಕ್ಷಾಬಳ್ಳಿಯ ಬಳಿಗೆ ಹೋಗಿ, ‘ನೀನು ಬಂದು ನಮ್ಮ ಅರಸನಾಗು,’ ಎಂದವು.</verse>
				<verse number="13">ಅದಕ್ಕೆ ಆ ಬಳ್ಳಿ, ‘ನಾನು ನನ್ನ ರಸದಿಂದ ದೇವತೆಗಳಿಗೂ ಮಾನವರಿಗೂ ಆನಂದ ತರುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೊ?’ ಎಂದಿತು.</verse>
				<verse number="14">“ಕಡೆಗೆ ಆ ಮರಗಳು ಮುಳ್ಳು ಪೊದೆಯ ಬಳಿಗೆ ಹೋಗಿ, ‘ನೀನು ಬಂದು ನಮ್ಮ ಅರಸನಾಗು,’ ಎಂದವು.</verse>
				<verse number="15">ಅದಕ್ಕೆ ಆ ಪೊದೆ, ‘ನೀವು ನಿಜವಾದ ಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ, ಬನ್ನಿ, ಬಂದು ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರುವೃಕ್ಷಗಳನ್ನು ಸುಟ್ಟುಬಿಡುವುದು,’ ಎಂದುಬಿಟ್ಟಿತು.</verse>
				<verse number="16">“ನೀವು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ನ್ಯಾಯಸಮ್ಮತವೇ? ಅದು ಧರ್ಮಕಾರ್ಯವೇ? ಯೆರುಬ್ಬಾಳನು ನಿಮಗೆ ಮಾಡಿದ ಉಪಕಾರಕ್ಕಾಗಿ ನೀವು ಅವನಿಗೂ ಅವನ ಮನೆಯವರಿಗೂ ಪ್ರತ್ಯುಪಕಾರ ಮಾಡಿದಿರೋ?</verse>
				<verse number="17">ನನ್ನ ತಂದೆ ತನ್ನ ಪ್ರಾಣಾಶೆಯನ್ನು ತೊರೆದು ಹೋರಾಡಿ ನಿಮ್ಮನ್ನು ಮಿದ್ಯಾನ್ಯರ ಕೈಯಿಂದ ಬಿಡಿಸಿದನಲ್ಲವೆ?</verse>
				<verse number="18">ಆದರೆ ನೀವು ಈಗ ನನ್ನ ತಂದೆಯ ಮನೆಗೆ ವಿರೋಧವಾಗಿ ನಿಂತು ಅವನ ಎಪ್ಪತ್ತು ಮಂದಿ ಮಕ್ಕಳನ್ನು ಒಂದೇ ಬಂಡೆಯ ಮೇಲೆ ವಧಿಸಿದ ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ನಿಮ್ಮ ಬಂಧುವೆಂದು ಹೇಳಿ ಶೆಕೆಮಿನ ಅರಸನನ್ನಾಗಿ ಮಾಡಿಕೊಂಡಿದ್ದೀರಿ.</verse>
				<verse number="19">ನೀವು ಈಗ ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲೇ ಆನಂದಿಸಿರಿ; ಅವನು ನಿಮ್ಮಲ್ಲೇ ಆನಂದಿಸಲಿ.</verse>
				<verse number="20">ಇಲ್ಲವಾದರೆ, ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆಮಿನವರನ್ನೂ ಮಿಲ್ಲೋ ಕೋಟೆಯವರನ್ನೂ ಸುಟ್ಟುಬಿಡಲಿ; ಶೆಕೆಮಿನವರಿಂದಲೂ ಮಿಲ್ಲೋ ಕೋಟೆಯವರಿಂದಲೂ ಬೆಂಕಿ ಹೊರಟು ಅಬೀಮೆಲೆಕನನ್ನು ಸುಟ್ಟುಬಿಡಲಿ.”</verse>
				<verse number="21">ಯೋತಾಮನು ಇಷ್ಟು ಹೇಳಿ ತನ್ನ ಸಹೋದರನಾದ ಅಬೀಮೆಲೆಕನಿಂದ ತಪ್ಪಿಸಿಕೊಂಡು ಬೇರಕ್ಕೆ ಓಡಿಹೋಗಿ ಅಲ್ಲೇ ವಾಸಮಾಡಿದನು.</verse>
				<verse number="22">ಅಬೀಮೆಲೆಕನು ಇಸ್ರಯೇಲರನ್ನು ಮೂರುವರ್ಷ ಆಳಿದನಂತರ</verse>
				<verse number="23">ಸರ್ವೇಶ್ವರಸ್ವಾಮಿ ಅವನಿಗೂ ಶೆಕೆಮಿನ ಹಿರಿಯರಿಗೂ ವೈಮನಸ್ಸು ಹುಟ್ಟುವಂತೆ ದುಷ್ಟ ಆತ್ಮವನ್ನು ಕಳುಹಿಸಿದರು. ಈ ಶೆಕೆಮಿನವರು ಅಬೀಮೆಲೆಕನಿಗೆ ದ್ರೋಹ ಎಸಗಿದರು.</verse>
				<verse number="24">ಹೀಗೆ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೂ ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆಮಿನವರ ಮೇಲೂ ಬರುವುದಕ್ಕೆ ಮಾರ್ಗವಾಯಿತು.</verse>
				<verse number="25">ಶೆಕೆಮಿನವರು ಅಬೀಮೆಲೆಕನಿಗೆ ವಿರೋಧವಾಗಿ ಪರ್ವತಶಿಖರಗಳಲ್ಲಿ ಹೊಂಚುಗಾರರನ್ನಿಟ್ಟರು. ಇವರು ಆ ದಾರಿಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಸುಲಿಗೆಮಾಡುತ್ತಿದ್ದರು. ಈ ವರ್ತಮಾನ ಅಬೀಮೆಲೆಕನಿಗೆ ಮುಟ್ಟಿತು.</verse>
				<verse number="26">ಅದೇ ಸಮಯದಲ್ಲಿ ಎಬೆದನ ಮಗನಾದ ಗಾಳನೆಂಬವನು ತನ್ನ ಬಂಧುಗಳೊಡನೆ ಶೆಕೆಮಿಗೆ ಬಂದನು. ಶೆಕೆಮಿನ ಹಿರಿಯರು ಅವನಲ್ಲಿ ಭರವಸೆ ಇಟ್ಟರು.</verse>
				<verse number="27">ಆ ಊರಿನವರು ಒಂದು ದಿವಸ ತಮ್ಮ ದ್ರಾಕ್ಷಾಫಲಗಳನ್ನು ಕೊಯ್ದು, ಆಲೆಗಳಲ್ಲಿ ರಸ ತೆಗೆದು, ತಮ್ಮ ದೇವರ ಗುಡಿಗೆ ಹೋಗಿ, ಹಬ್ಬಮಾಡಿ, ಉಂಡು, ಕುಡಿದು ಅಬೀಮೆಲೆಕನನ್ನು ಶಪಿಸಿದರು.</verse>
				<verse number="28">ಎಬೇದನ ಮಗನಾದ ಗಾಳನೂ ಅವರ ಸಂಗಡ ಕೂಡಿಕೊಂಡು, “ಅಬೀಮೆಲೆಕನು ಎಷ್ಟರವನು? ಶೆಕೆಮಿನವರಾದ ನಾವು ಎಷ್ಟರವರು? ನಾವು ಅಬೀಮೆಲೆಕನಿಗೆ ಏಕೆ ಸೇವೆಮಾಡಬೇಕು? ಅವನು ಯೆರುಬ್ಬಾಳನ ಮಗನಲ್ಲವೇ? ಅವನ ಪುರಾಧಿಕಾರಿ ಜೆಬುನಲ್ಲವೇ? ನಾವು ಅವನಿಗೆ ಏಕೆ ಸೇವೆಮಾಡಬೇಕು? ಶೆಕೆಮನ ತಂದೆಯಾದ ಹಮೋರನ ವಂಶದವರಿಗೇ ಸೇವೆಮಾಡೋಣ.</verse>
				<verse number="29">ಈ ಜನರ ಮೇಲೆ ನನಗೆ ಅಧಿಕಾರವಿದ್ದರೆ ಅಬೀಮೆಲೆಕನನ್ನು ಓಡಿಸಿ ಬಿಡುತ್ತಿದ್ದೆ,” ಎಂದು ಹೇಳಿದನು. ಅಷ್ಟು ಮಾತ್ರವಲ್ಲದೆ, “ಎಲಾ, ಅಬೀಮೆಲೆಕನೇ, ಸೈನ್ಯವನ್ನು ತೆಗೆದುಕೊಂಡು ನನ್ನೊಡನೆ ಯುದ್ಧಕ್ಕೆ ಬಾ,” ಎಂದು ಕೊಚ್ಚಿಕೊಂಡನು.</verse>
				<verse number="30">ಪುರಾಧಿಕಾರಿಯಾದ ಜೆಬುಲನು ಎಬೆದನ ಮಗನಾದ ಗಾಳನ ಮಾತುಗಳನ್ನು ಕೇಳಿ ಕೋಪಗೊಂಡನು. ಯಾರಿಗೂ ತಿಳಿಯದಂತೆ ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿ,</verse>
				<verse number="31">“ಇಗೋ, ಎಬೆದನ ಮಗನಾದ ಗಾಳನೂ ಅವನ ಬಂಧುಗಳೂ ಇಲ್ಲಿಗೆ ಬಂದು ಶೆಕೆಮಿನವರೆಲ್ಲರನ್ನೂ ನಿನಗೆ ವಿರೋಧವಾಗಿ ಹುರಿದುಂಬಿಸುತ್ತಿದ್ದಾರೆ.</verse>
				<verse number="32">ಆದುದರಿಂದ ನೀನು ಈ ರಾತ್ರಿಯಲ್ಲೇ ಸೈನ್ಯವನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚುಹಾಕಿಕೊಂಡಿರು.</verse>
				<verse number="33">ಸೂರ್ಯನು ಉದಯಿಸುತ್ತಲೇ ಎದ್ದು ಪಟ್ಟಣದ ಮೇಲೆ ಬೀಳು; ಅವನೂ ಅವನ ಜೊತೆಯಲ್ಲಿರುವವರೂ ನಿನಗೆ ವಿರೋಧವಾಗಿ ಹೊರಟು ಬಂದಾಗ ನಿನಗೆ ಅನುಕೂಲ ತೋರಿದ ಹಾಗೆ ಮಾಡು,” ಎಂದು ಹೇಳಿಸಿದನು.</verse>
				<verse number="34">ಅಬೀಮೆಲೆಕನೂ ಅವನ ಜನರೂ ರಾತ್ರಿಯಲ್ಲೇ ಹೊರಟುಬಂದು ನಾಲ್ಕು ಗುಂಪಾಗಿ ಶೆಕೆಮಿನವರನ್ನು ಹೊಂಚಿ ಕಾಯುತ್ತಿದ್ದರು.</verse>
				<verse number="35">ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಊರ ಬಾಗಿಲಲ್ಲಿ ನಿಂತುಕೊಂಡಾಗ ಅಬೀಮೆಲೆಕನೂ ಅವನ ಜನರೂ ತಾವು ಹೊಂಚಿ ನೋಡುತ್ತಿದ್ದ ಸ್ಥಳದಿಂದ ಎದ್ದು ಬಂದರು.</verse>
				<verse number="36">ಗಾಳನು ಅವರನ್ನು ಕಂಡು ಜೆಬುಲನಿಗೆ, “ಇಗೋ, ಬೆಟ್ಟದ ಮೇಲಿನಿಂದ ಜನರು ಬರುತ್ತಿದ್ದಾರೆ,” ಎಂದು ಹೇಳಲು ಜೆಬುಲನು ಅವನಿಗೆ, “ನೀನು ಬೆಟ್ಟದ ನೆರಳನ್ನು ನೋಡಿ ಜನರೆಂದು ಭಾವಿಸುತ್ತೀ,” ಎಂದನು. ಅವನು ಪುನಃ,</verse>
				<verse number="37">“ನೋಡು ದೇಶನಾಭಿಗಿರಿಯಿಂದ ಜನರು ಬರುತ್ತಿದ್ದಾರೆ: ಕಣಿಹೇಳುವವರ ಮರದ ಮಾರ್ಗವಾಗಿ ಇನ್ನೊಂದು ಗುಂಪು ಬರುತ್ತಿದೆ,” ಎಂದನು.</verse>
				<verse number="38">ಆಗ ಜೆಬುಲನು ಅವನಿಗೆ, “ಈಗ ನಿನ್ನ ಮಾತೆಲ್ಲಿ? ಅಬೀಮೆಲೆಕನು ಎಷ್ಟರವನು? ನಾವು ಅವನಿಗೆ ಏಕೆ ಸೇವೆಮಾಡಬೇಕು ಎಂದು ಕೊಚ್ಚಿಕೊಂಡಿಯಲ್ಲವೆ? ಅವರು ನೀನು ತಿರಸ್ಕರಿಸಿದ ಜನರಲ್ಲವೇ? ಹಾಗಾದರೆ ಹೋಗಿ ಅವರೊಡನೆ ಯುದ್ಧಮಾಡು, ನೋಡೋಣ,” ಎಂದು ಹೇಳಿದನು.</verse>
				<verse number="39">ಗಾಳನು ಶೆಕೆಮಿನವರ ನಾಯಕನಾಗಿ ಹೊರಟು ಅಬೀಮೆಲೆಕನೊಡನೆ ಕಾದಾಡಿದನು.</verse>
				<verse number="40">ಆದರೆ ಅಬೀಮೆಲೆಕನಿಗೆ ಬೆನ್ನುತೋರಿಸಿ ಓಡಿಹೋಗಬೇಕಾಯಿತು. ಅವನು ಇವನನ್ನು ಹಿಂದಟ್ಟಿದನು. ಊರಬಾಗಿಲಿನವರೆಗೆ ಅನೇಕ ಮಂದಿ ಹತರಾಗಿ ಬಿದ್ದರು.</verse>
				<verse number="41">ಅನಂತರ ಅಬೀಮೆಲೆಕನು ಹೋಗಿ ಅರೂಮದಲ್ಲಿ ವಾಸಿಸಿದನು. ಇತ್ತ ಜೆಬುಲನು ಗಾಳನನ್ನೂ ಅವನ ಬಂಧುಗಳನ್ನೂ ಶೆಕೆಮಿನಿಂದ ಅಟ್ಟಿಬಿಟ್ಟನು.</verse>
				<verse number="42">ಮಾರನೆಯ ದಿನಜನರು ಬೈಲಿಗೆ ಹೊರಟುಬಂದರು;</verse>
				<verse number="43">ಇದು ಅಬೀಮೆಲೆಕನಿಗೆ ಗೊತ್ತಿದ್ದುದರಿಂದ ಅವನು ತನ್ನ ಜನರನ್ನು ಮೂರು ಗುಂಪುಮಾಡಿ ಅವರನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚುಹಾಕುತ್ತಿದ್ದನು. ಜನರು ಪಟ್ಟಣದಿಂದ ಹೊರಟು ಬರುವುದನ್ನು ಇವನು ಕಾಣುತ್ತಲೆ ಅಲ್ಲಿಂದ ಎದ್ದು ಅವರ ಮೇಲೆ ದಾಳಿಮಾಡಿದನು.</verse>
				<verse number="44">ಅಬೀಮೆಲೆಕನೂ ಅವನ ಸಂಗಡ ಇದ್ದ ಗುಂಪಿನವರೂ ಓಡಿಬಂದು ಊರಬಾಗಿಲಲ್ಲಿ ನಿಂತರು; ಉಳಿದ ಎರಡು ಗುಂಪಿನವರು ಬೈಲಿನಲ್ಲಿದ್ದ ಶೆಕೆಮಿನವರ ಮೇಲೆ ಬಿದ್ದು ಅವರನ್ನು ಹತಮಾಡಿದರು.</verse>
				<verse number="45">ಅಬೀಮೆಲೆಕನು ಆ ದಿನವೆಲ್ಲಾ ಯುದ್ಧಮಾಡಿ ಪಟ್ಟಣವನ್ನು ಸ್ವಾಧೀನಮಾಡಿಕೊಂಡು ಅದರ ಜನರನ್ನೆಲ್ಲಾ ಸದೆಬಡಿದು ಊರನ್ನು ಕೆಡವಿ ಅಲ್ಲಿ ಉಪ್ಪನ್ನು ಎರಚಿಬಿಟ್ಟನು.</verse>
				<verse number="46">ಶೆಕೆಮಿನ ಕೋಟೆಯವರು ಇದನ್ನು ಕೇಳಿ ಏಲ್ ಬೆರೀತ್ ಎಂಬ ದೇವರ ಗುಡಿಯ ನೆಲಮನೆಯಲ್ಲಿ ಅಡಗಿಕೊಂಡರು.</verse>
				<verse number="47">ಕೋಟೆಯವರೆಲ್ಲರೂ ಅಲ್ಲಿ ಅಡಗಿಕೊಂಡಿದ್ದಾರೆಂಬುದು ಅಬೀಮೆಲೆಕನಿಗೆ ಗೊತ್ತಾದಾಗ ಅವನು ಕೊಡಲಿಯನ್ನು ತೆಗೆದುಕೊಂಡು ತನ್ನ ಜನರೆಲ್ಲರೊಡನೆ ಚಲ್ಮೋನ್ ಗುಡ್ಡವನ್ನೇರಿದನು.</verse>
				<verse number="48">ತನ್ನವರಿಗೆ, “ನಾನು ಮಾಡುವಂತೆಯೇ ನೀವೂ ತೀವ್ರವಾಗಿ ಮಾಡಿರಿ,” ಎಂದು ಹೇಳಿ ತಾನು ಒಂದು ಮರದ ಕೊಂಬೆಯನ್ನು ಕಡಿದು ಹೆಗಲ ಮೇಲೆ ಹೊತ್ತುಕೊಂಡನು.</verse>
				<verse number="49">ಅವರೂ ಅದರಂತೆಯೇ ಮಾಡಿದರು. ಅವನ ಹಿಂದೆ ಹೋಗಿ ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್ ಕೋಟೆಯವರೆಲ್ಲರೂ ಸತ್ತರು. ಸ್ತ್ರೀಪುರುಷರೆಲ್ಲಾ ಸೇರಿ ಅವರು ಸುಮಾರು ಸಾವಿರ ಜನರಿದ್ದರು.</verse>
				<verse number="50">ಅನಂತರ ಅಬೀಮೆಲೆಕನು ತೇಬೇಚಿಗೆ ಹೋಗಿ, ಮುತ್ತಿಗೆ ಹಾಕಿ ಅದನ್ನು ಹಿಡಿದನು.</verse>
				<verse number="51">ಆ ಊರಿನ ಮಧ್ಯದಲ್ಲಿ ಒಂದು ಭದ್ರವಾದ ಗೋಪುರವಿತ್ತು; ಊರಿನ ಸ್ತ್ರೀಪುರುಷರೆಲ್ಲರೂ ಓಡಿಹೋಗಿ ಅದರೊಳಗೆ ಹೊಕ್ಕು ಬಾಗಿಲನ್ನು ಮುಚ್ಚಿಕೊಂಡು ಮೇಲೆ ಹತ್ತಿದರು.</verse>
				<verse number="52">ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಗೋಪುರದ ಬಾಗಿಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋದನು.</verse>
				<verse number="53">ಒಬ್ಬ ಸ್ತ್ರೀ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಬೀಳಿಸಿ ಅವನ ತಲೆಬುರುಡೆಯನ್ನು ಒಡೆದುಬಿಟ್ಟಳು.</verse>
				<verse number="54">ಅವನು ಕೂಡಲೆ ತನ್ನ ಆಯುಧವಾಹಕನನ್ನು ಕರೆದು ಅವನಿಗೆ, “ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ಹೆಂಗಸಿನ ಕೈಯಿಂದ ಸತ್ತನೆಂದು ಹೇಳಾರು,” ಎನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದುಹಾಕಿದನು.</verse>
				<verse number="55">ಅಬೀಮೆಲೆಕನು ಸತ್ತುಹೋದದ್ದನ್ನು ಕಂಡು ಇಸ್ರಯೇಲರು ತಮ್ಮ ತಮ್ಮ ಸ್ಥಳಗಳಿಗೆ ಹಿಂದಿರುಗಿದರು.</verse>
				<verse number="56">ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿ ತನ್ನ ತಂದೆಗೆ ದ್ರೋಹಿಯಾದ ಅಬೀಮೆಲೆಕನಿಗೆ ದೇವರು ಈ ರೀತಿಯಾಗಿ ಮುಯ್ಯಿತೀರಿಸಿದರು.</verse>
				<verse number="57">ಶೆಕೆಮಿನವರಿಗಾದರೋ ಅವರ ದುಷ್ಟತ್ವವು ಅವರ ತಲೆಯ ಮೇಲೆಯೇ ಬರುವಂತೆಮಾಡಿದರು. ಹೀಗೆ ಯೆರುಬ್ಬಾಳನ ಮಗ ಯೋತಾಮನು ಇವರ ಬಗ್ಗೆ ನುಡಿದ ಶಾಪ ನೆರವೇರಿತು.</verse>
			</chapter>
			<chapter number="10">
				<verse number="1">ಅಬೀಮೆಲೆಕನ ತರುವಾಯ ಇಸ್ಸಾಕಾರ್ ಕುಲದ ಪೂವನ ಮಗನೂ ದೋದೋವಿನ ಮೊಮ್ಮಗನೂ ಆಗಿದ್ದ ತೋಲನು ಎದ್ದು ಇಸ್ರಯೇಲರನ್ನು ಕಾಪಾಡಿದನು. ಅವನು ಎಫ್ರಯಿಮ್ ಮಲೆನಾಡಿನ ಶಾಮೀರವೆಂಬ ಊರಲ್ಲಿ ವಾಸವಾಗಿದ್ದನು.</verse>
				<verse number="2">ಇಪ್ಪತ್ತಮೂರು ವರ್ಷಗಳವರೆಗೆ ಇಸ್ರಯೇಲರನ್ನು ಪಾಲಿಸಿದ ನಂತರ ಸತ್ತು ಸಮಾಧಿಯಾದನು.</verse>
				<verse number="3">ಅವನ ತರುವಾಯ ಗಿಲ್ಯಾದ್ಯನಾದ ಯಾಯೀರನು ಎದ್ದು ಇಸ್ರಯೇಲರನ್ನು ಇಪ್ಪತ್ತೆರಡು ವರ್ಷ ಪಾಲಿಸಿದನು.</verse>
				<verse number="4">ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ.</verse>
				<verse number="5">ಯಾಯೀರನು ಸತ್ತು ಕಾಮೋನಿನಲ್ಲಿ ಸಮಾಧಿಯಾದನು.</verse>
				<verse number="6">ಇಸ್ರಯೇಲರು ಇನ್ನೊಮ್ಮೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು; ಅವರು ಸರ್ವೇಶ್ವರನನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಮತ್ತು ಅರಾಮ್ಯರು, ಚೀದೋನ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಇವರ ದೇವತೆಗಳನ್ನೂ ಪೂಜಿಸತೊಡಗಿದರು. ಸರ್ವೇಶ್ವರನನ್ನಾದರೋ ಬಿಟ್ಟೇಬಿಟ್ಟರು.</verse>
				<verse number="7">ಆದುದರಿಂದ ಸರ್ವೇಶ್ವರ ಇಸ್ರಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿದರು.</verse>
				<verse number="8">ಇವರು ಆ ವರ್ಷದಿಂದ ಹದಿನೆಂಟು ವರ್ಷಗಳವರೆಗೆ ಜೋರ್ಡನಿನ ಆಚೆ ಗಿಲ್ಯಾದಿನಲ್ಲಿದ್ದ ಇಸ್ರಯೇಲರನ್ನು ಬಹಳವಾಗಿ ಪೀಡಿಸುತ್ತಾ ಅವರ ಮೇಲೆ ದಬ್ಬಾಳಿಕೆ ನಡೆಸಿದರು. ಈ ನಾಡು ಮೊದಲು ಅಮೋರಿಯರದಾಗಿತ್ತು.</verse>
				<verse number="9">ಇದಲ್ಲದೆ ಅಮ್ಮೋನಿಯರು ಜೋರ್ಡನ್ ನದಿಯನ್ನು ದಾಟಿ ಯೆಹೂದ, ಬೆನ್ಯಾಮೀನ್, ಎಫ್ರಯಿಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಯೇಲರು ಬಹಳ ಕಷ್ಟಕ್ಕೀಡಾದರು.</verse>
				<verse number="10">ಆಗ ಅವರು ಸರ್ವೇಶ್ವರನಿಗೆ, “ನಾವು ನಮ್ಮ ದೇವರಾದ ನಿಮ್ಮನ್ನು ಬಿಟ್ಟು ಬಾಳನ ಪ್ರತಿಮೆಗಳನ್ನು ಪೂಜಿಸಿ ನಿಮಗೆ ವಿರುದ್ಧವಾಗಿ ಪಾಪಮಾಡಿದ್ದೇವೆ,” ಎಂದು ಮೊರೆಯಿಟ್ಟರು.</verse>
				<verse number="11">ಸರ್ವೇಶ್ವರ ಅವರಿಗೆ, “ಈಜಿಪ್ಟ್, ಅಮೋರಿಯ, ಅಮ್ಮೋನಿಯ, ಫಿಲಿಷ್ಟಿಯ, ಚೀದೋನ್ಯ, ಅಮಾಲೇಕ್ಯ, ಮಾವೋನ್ಯ</verse>
				<verse number="12">ಇವೇ ಮೊದಲಾದ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ; ನಾನು ಅವುಗಳಿಂದ ನಿಮ್ಮನ್ನು ಬಿಡಿಸಿದೆ.</verse>
				<verse number="13">ಆದರೂ ನೀವು ಮತ್ತೆ ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಪೂಜಿಸುತ್ತಾ ಬಂದಿರಿ; ಆದುದರಿಂದ ನಾನು ಇನ್ನು ಮುಂದೆ ನಿಮ್ಮನ್ನು ರಕ್ಷಿಸುವುದೇ ಇಲ್ಲ.</verse>
				<verse number="14">ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿ; ಅವು ನಿಮ್ಮ ಈ ಇಕ್ಕಟ್ಟಿನಲ್ಲಿ ಸಹಾಯಮಾಡಲಿ,” ಎಂದರು.</verse>
				<verse number="15">ಇಸ್ರಯೇಲರು ಮರಳಿ ಸರ್ವೇಶ್ವರನಿಗೆ, “ಪಾಪ ಮಾಡಿದ್ದೇವೆ; ನಿಮಗೆ ಸರಿ ತೋರಿದಂತೆ ನಮಗೆ ಮಾಡಿ; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು,” ಎಂದು ಮೊರೆಯಿಟ್ಟರು. ಅನ್ಯದೇವತೆಗಳನ್ನು ಹೊರಗೆ ಹಾಕಿ ಸರ್ವೇಶ್ವರನನ್ನು ಪೂಜಿಸತೊಡಗಿದರು.</verse>
				<verse number="16">ಆಗ ಇಸ್ರಯೇಲರ ಸಂಕಟದ ನಿಮಿತ್ತ ಸರ್ವೇಶ್ವರ ಬಹಳವಾಗಿ ನೊಂದುಕೊಂಡರು.</verse>
				<verse number="17">ಅಮ್ಮೋನಿಯರು ದಂಡೆತ್ತಿ ಬಂದು ಗಿಲ್ಯಾದಿನಲ್ಲಿ ಇಳಿದುಕೊಂಡರು. ಇಸ್ರಯೇಲರು ಕೂಡಿ ಮಿಚ್ಫೆಯಲ್ಲಿ ಪಾಳೆಯಮಾಡಿಕೊಂಡರು.</verse>
				<verse number="18">ಗಿಲ್ಯಾದಿನ ಜನರು ಹಾಗು ಅಧಿಪತಿಗಳು, “ನಮ್ಮಲ್ಲಿ ಅಮ್ಮೋನಿಯರೊಡನೆ ಯುದ್ಧಕ್ಕೆ ಕೈಹಾಕಬಲ್ಲವನಾರು? ಅಂಥವನನ್ನು ಗಿಲ್ಯಾದಿನವರೆಲ್ಲರ ಮೇಲೆ ನಾಯಕನನ್ನಾಗಿ ಮಾಡಬಹುದಲ್ಲಾ,” ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.</verse>
			</chapter>
			<chapter number="11">
				<verse number="1">ಗಿಲ್ಯಾದ್ಯನಾದ ಯೆಪ್ತಾಹನು ಒಬ್ಬ ಮಹಾಪರಾಕ್ರಮಿ. ಈತ ಗಿಲ್ಯಾದನಿಗೆ ಒಬ್ಬ ಉಪಪತ್ನಿಯಲ್ಲಿ ಹುಟ್ಟಿದವನು.</verse>
				<verse number="2">ಗಿಲ್ಯಾದನಿಗೆ ಹೆಂಡತಿಯಲ್ಲೂ ಮಕ್ಕಳು ಹುಟ್ಟಿದರು. ಇವರು ದೊಡ್ಡವರಾದ ಮೇಲೆ ಯೆಪ್ತಾಹನಿಗೆ, “ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದುದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು,” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.</verse>
				<verse number="3">ಅವನು ತನ್ನ ಸಹೋದರನನ್ನು ಬಿಟ್ಟು ಟೋಬ್ ದೇಶಕ್ಕೆ ಹೋದನು. ಅಲ್ಲಿನ ಪುಂಡಪೋಕರಿಗಳು ಕೂಡಿ ಅವನನ್ನು ಹಿಂಬಾಲಿಸಿದರು.</verse>
				<verse number="4">ಇಸ್ರಯೇಲರಿಗೆ ವಿರೋಧವಾಗಿ ಬಂದ ಅಮ್ಮೋನಿಯರು ಸ್ವಲ್ಪ ದಿನಗಳಾದ ಮೇಲೆ ಯುದ್ಧವನ್ನು ಪ್ರಾರಂಭಿಸಿದರು.</verse>
				<verse number="5">ಆಗ ಗಿಲ್ಯಾದಿನ ಹಿರಿಯರು ಯೆಪ್ತಾಹನನ್ನು ಟೋಬ್ ದೇಶದಿಂದ ಕರೆದುಕೊಂಡು ಬರುವುದಕ್ಕಾಗಿ ಅಲ್ಲಿಗೆ ಹೋದರು.</verse>
				<verse number="6">ಅವನಿಗೆ, “ನಾವು ಅಮ್ಮೋನಿಯರೊಡನೆ ಯುದ್ಧಮಾಡುವ ಹಾಗೆ ನೀನು ಬಂದು ನಮ್ಮ ನಾಯಕನಾಗು,” ಎಂದು ಬೇಡಿಕೊಂಡರು.</verse>
				<verse number="7">ಅವನು ಅವರಿಗೆ, “ನನ್ನನ್ನು ಹಗೆಮಾಡಿ ನನ್ನ ತಂದೆಯ ಮನೆಯಿಂದ ಅಟ್ಟಿಬಿಟ್ಟವರು ನೀವೇ ಅಲ್ಲವೇ? ನಿಮಗೆ ಕಷ್ಟಬಂದಾಗ ನನ್ನ ಬಳಿಗೆ ಏಕೆ ಬಂದಿರಿ?” ಎಂದನು.</verse>
				<verse number="8">ಅವರು, “ಆದುದರಿಂದಲೇ ಈಗ ಪುನಃ ನಿನ್ನ ಬಳಿಗೆ ಬಂದಿದ್ದೇವೆ; ನಮ್ಮ ಸಂಗಡ ಬಂದು ಅಮ್ಮೋನಿಯರೊಡನೆ ಯುದ್ಧಮಾಡುವಿಯಾದರೆ ಗಿಲ್ಯಾದಿನವರಿಗೆಲ್ಲಾ ನೀನೆ ಶಿರಸ್ಸಾಗಿರುವೆ,” ಎಂದು ಹೇಳಿದರು.</verse>
				<verse number="9">ಆಗ ಯೆಪ್ತಾಹನು ಅವರಿಗೆ, “ನೀವು ನನ್ನನ್ನು ಅಮ್ಮೋನಿಯರೊಡನೆ ಯುದ್ಧಮಾಡುವುದಕ್ಕಾಗಿ ಕರೆದುಕೊಂಡು ಹೋಗುವುದಾದರೆ ಸರ್ವೇಶ್ವರ ಅವರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟರೆ ನಿಜವಾಗಿ ನೀವು ನನ್ನನ್ನು ಅಧಿಪತಿಯನ್ನಾಗಿ ಮಾಡುವಿರೋ?” ಎಂದು ಕೇಳಿದನು.</verse>
				<verse number="10">ಅವರು ಅವನಿಗೆ, “ಹಾಗೆಯೇ ಮಾಡುತ್ತೇವೆ; ಉಭಯತ್ರರ ಮಾತುಗಳಿಗೆ ಸರ್ವೇಶ್ವರನೇ ಸಾಕ್ಷಿ,” ಎಂದು ಉತ್ತರಕೊಟ್ಟರು.</verse>
				<verse number="11">ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು; ಜನರು ಅವನನ್ನು ಅಧಿಪತಿಯನ್ನಾಗಿಯೂ ನಾಯಕನನ್ನಾಗಿಯೂ ನೇಮಿಸಿದರು. ಯೆಪ್ತಾಹನು ತನ್ನ ವಿಷಯಗಳನ್ನೆಲ್ಲಾ ಮಿಚ್ಫೆಯಲ್ಲಿ ಸರ್ವೇಶ್ವರನ ಮುಂದೆ ಅರಿಕೆ ಮಾಡಿದನು.</verse>
				<verse number="12">ಯೆಪ್ತಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನನಗೂ ನಿನಗೂ ಏನಿದೆ? ನೀನು ನನ್ನ ದೇಶಕ್ಕೆ ವಿರೋಧವಾಗಿ ಯುದ್ಧ ಮಾಡುವುದಕ್ಕೇನು ಕಾರಣ?” ಎಂದು ಕೇಳಿದನು.</verse>
				<verse number="13">ಆ ಅರಸನು ದೂತರಿಗೆ, “ಇಸ್ರಯೇಲರು ಈಜಿಪ್ಟಿನಿಂದ ಬಂದಾಗ ಅರ್ನೋನಿನಿಂದ ಯಬ್ಬೋಕ್, ಜೋರ್ಡನ್ ನದಿಗಳವರೆಗೂ ಇದ್ದು ನನ್ನ ದೇಶವನ್ನು ಕಸಿದುಕೊಂಡರಲ್ಲವೆ? ನೀನು ಈಗ ಅದನ್ನು ಸಮಾಧಾನದಿಂದ ಹಿಂದಕ್ಕೆ ಕೊಡು,” ಎಂದು ಹೇಳಿ ಕಳುಹಿಸಿದನು.</verse>
				<verse number="14">ಯೆಪ್ತಾಹನು ಇನ್ನೊಂದು ಸಾರಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ಅವನಿಗೆ,</verse>
				<verse number="15">“ಯೆಪ್ತಾಹನಾದ ನನ್ನ ಮಾತನ್ನು ಕೇಳು; ಇಸ್ರಯೇಲರು ಮೋವಾಬ್ಯರ ಮತ್ತು ಅಮ್ಮೋನಿಯರ ದೇಶವನ್ನು ತೆಗೆದುಕೊಳ್ಳಲೇ ಇಲ್ಲ.</verse>
				<verse number="16">ಅವರು ಈಜಿಪ್ಟರ ನಾಡನ್ನು ಬಿಟ್ಟ ನಂತರ ಮರುಭೂಮಿಯಲ್ಲಿ ಸಂಚರಿಸಿ ಕೆಂಪುಸಮುದ್ರಕ್ಕೂ ಅನಂತರ ಕಾದೇಶಿಗೂ ಬಂದರು.</verse>
				<verse number="17">ಅವರು ಅಲ್ಲಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿ ಹೋಗುವುದಕ್ಕೆ ಅಪ್ಪಣೆಯಾಗಬೇಕು,’ ಎಂದು ಬೇಡಿಕೊಳ್ಳಲು ಅವನು ಒಪ್ಪಿಕೊಳ್ಳಲಿಲ್ಲ. ತರುವಾಯ ಮೋವಾಬ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಲು ಅವನು ಒಪ್ಪಿಕೊಳ್ಳಲಿಲ್ಲ; ಆದುದರಿಂದ ಅವರು ಕಾದೇಶಿನಲ್ಲಿಯೇ ನಿಂತರು.</verse>
				<verse number="18">ಅನಂತರ ಅವರು ಮರುಭೂಮಿಯಲ್ಲಿ ಪ್ರಯಾಣ ಮಾಡಿ ಎದೋಮ್, ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು ಅದರ ಮೇರೆಯಾಗಿರುವ ಅರ್ನೋನ್ ನದಿಯ ಆಚೆಯಲ್ಲಿ ಇಳಿದುಕೊಂಡರು; ಮೋವಾಬ್ಯರ ಮೇರೆಯೊಳಗೆ ಕಾಲು ಇಡಲಿಲ್ಲ.</verse>
				<verse number="19">ಬಳಿಕ ಹೆಷ್ಬೋನನ್ನು ರಾಜಧಾನಿ ಮಾಡಿಕೊಂಡಿದ್ದ ಅಮೋರಿಯರ ಅರಸನಾದ ಸೀಹೋನನ ಬಳಿಗೆ ಅವರು ದೂತರನ್ನು ಕಳುಹಿಸಿ, “ನಿನ್ನ ದೇಶವನ್ನು ದಾಟಿ ನಮ್ಮ ಸ್ಥಳಕ್ಕೆ ಹೋಗುವುದಕ್ಕೆ ಅಪ್ಪಣೆಕೊಡು,” ಎಂದು ಅವನನ್ನು ಬೇಡಿಕೊಂಡರು.</verse>
				<verse number="20">ಆದರೆ ಸೀಹೋನನು ಅವರನ್ನು ನಂಬದೆ ತನ್ನ ಸೀಮೆಯನ್ನು ದಾಟಿಹೋಗುವುದಕ್ಕೆ ಅಪ್ಪಣೆಕೊಡದೆ ತನ್ನ ಜನರನ್ನು ಕೂಡಿಸಿಕೊಂಡು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.</verse>
				<verse number="21">ಇಸ್ರಯೇಲರ ದೇವರಾದ ಸರ್ವೇಶ್ವರ ಸೀಹೋನನನ್ನೂ ಅವನ ಜನರೆಲ್ಲರನ್ನೂ ಇಸ್ರಯೇಲರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು ಅವರ ದೇಶವನ್ನೆಲ್ಲಾ ಸ್ವಾಧೀನಪಡಿಸಿಕೊಂಡರು.</verse>
				<verse number="22">ಹೀಗೆ ಇಸ್ರಯೇಲರು ಅರ್ನೋನಿನಿಂದ ಯಬ್ಬೋಕಿನವರೆಗೂ ಇದ್ದ ಅಮೋರಿಯರ ಪ್ರಾಂತ್ಯವನ್ನೆಲ್ಲಾ ವಶಮಾಡಿಕೊಂಡರು.</verse>
				<verse number="23">“ಇಸ್ರಯೇಲರ ದೇವರಾದ ಸರ್ವೇಶ್ವರ ಈ ದೇಶವನ್ನು ಅಮೋರಿಯರಿಂದ ತೆಗೆದು ತನ್ನ ಪ್ರಜೆಗಳಾದ ಇಸ್ರಯೇಲರಿಗೆ ಕೊಟ್ಟ ಮೇಲೆ ನೀನು ಅದನ್ನು ತೆಗೆದುಕೊಳ್ಳುವುದು ಹೇಗೆ?</verse>
				<verse number="24">ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವತಂತ್ರಿಸಿಕೊಳ್ಳುವುದಿಲ್ಲವೇ? ಹಾಗೆಯೇ ನಮ್ಮ ದೇವರಾದ ಸರ್ವೇಶ್ವರ ನಮಗೆ ಒಪ್ಪಿಸಿಕೊಡುವುದನ್ನು ನಾವು ಸ್ವತಂತ್ರಿಸಿಕೊಳ್ಳುವುದು ನ್ಯಾಯವಾಗಿದೆ.</verse>
				<verse number="25">ಚಿಪ್ಪೋರನ ಮಗನೂ ಮೋವಾಬ್ಯರ ಅರಸನೂ ಆದ ಬಾಲಾಕನಿಗಿಂತ ನೀನು ಹೆಚ್ಚಿನವನೇ? ಅವನು ಇಸ್ರಯೇಲರೊಡನೆ ಎಂದಾದರೂ ವಿವಾದಮಾಡಿದನೇ? ಅಥವಾ ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೇ?</verse>
				<verse number="26">ಇಸ್ರಯೇಲರು ಮುನ್ನೂರು ವರ್ಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲೂ ಅವುಗಳ ಗ್ರಾಮಗಳಲ್ಲೂ ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲೂ ವಾಸಿಸುತ್ತಿದ್ದಾರಲ್ಲವೆ? ಇಷ್ಟು ದಿವಸಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ?</verse>
				<verse number="27">ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದರಿಂದ ನೀನೇ ಅನ್ಯಾಯಮಾಡಿದ ಹಾಗಾಯಿತು. ನ್ಯಾಯಸ್ಥಾಪಕರಾದ ಸರ್ವೇಶ್ವರಸ್ವಾಮಿಯೇ ಈ ಹೊತ್ತು ಇಸ್ರಯೇಲರಿಗೂ ಅಮ್ಮೋನಿಯರಿಗೂ ಮಧ್ಯೆ ನ್ಯಾಯ ತೀರಿಸಲಿ,” ಎಂದು ಹೇಳಿಸಿದನು.</verse>
				<verse number="28">ಆದರೆ ಯೆಪ್ತಾಹನು ಹೇಳಿಕಳುಹಿಸಿದ ಮಾತುಗಳಿಗೆ ಅಮ್ಮೋನಿಯರ ಅರಸನು ಕಿವಿಗೊಡಲಿಲ್ಲ.</verse>
				<verse number="29">ಆಗ ಸರ್ವೇಶ್ವರನ ಆತ್ಮ ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ್ಯ, ಮನಸ್ಸೆಯ ನಾಡು, ಇವುಗಳಲ್ಲಿ ಸಂಚರಿಸಿ ಮತ್ತೆ ಗಿಲ್ಯಾದಿನ ಮಿಚ್ಫೆಗೆ ಬಂದು ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.</verse>
				<verse number="30">ಇದಲ್ಲದೆ ಅವನು ಸರ್ವೇಶ್ವರಸ್ವಾಮಿಗೆ, “ತಾವು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವುದಾದರೆ</verse>
				<verse number="31">ನಾನು ಸುರಕ್ಷಿತವಾಗಿ ಹಿಂದಿರುಗುವಾಗ ನನ್ನ ಮನೆಯ ಬಾಗಿಲಿನಿಂದ ನನ್ನನ್ನು ಎದುರುಗೊಳ್ಳಲು ಮೊದಲು ಬರುವಂಥ ಪ್ರಾಣಿ ತಮಗೆ ಮೀಸಲು ಎಂದೂ ಅದನ್ನು ತಮಗೆ ದಹನಬಲಿದಾನ ಮಾಡುವೆನು” ಎಂದೂ ಹರಕೆಮಾಡಿದನು.</verse>
				<verse number="32">ಯೆಪ್ತಾಹನು ನದಿಯನ್ನು ದಾಟಿ ಅಮ್ಮೋನಿಯರಿಗೆ ವಿರುದ್ಧ ಯುದ್ಧಕ್ಕೆ ಹೋಗಲು ಅವರನ್ನು ಸರ್ವೇಶ್ವರ ಅವನ ಕೈಗೆ ಒಪ್ಪಿಸಿದರು.</verse>
				<verse number="33">ಅವನು ಅವರನ್ನು ಸೋಲಿಸಿ ಅರೋಯೇರಿನಿಂದ ಮಿನ್ನೀತಿನ ದಾರಿಯವರೆಗೂ ಅಬೇಲ್ ಕೆರಾಮೀಮಿನವರೆಗೂ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿದನು. ಹೀಗೆ ದೊಡ್ಡ ಜಯವಾಗಿ, ಅಮ್ಮೋನಿಯರು ಇಸ್ರಯೇಲರಿಗೆ ಶರಣಾದರು.</verse>
				<verse number="34">ಯೆಪ್ತಾಹನು ಮಿಚ್ಫೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿ ಬಡಿಯುತ್ತಾ ನಾಟ್ಯವಾಡುತ್ತಾ ಅವನನ್ನು ಎದುರುಗೊಳ್ಳುವುದಕ್ಕಾಗಿ ಬಂದಳು. ಆಕೆ ಅವನ ಒಬ್ಬಳೇ ಮಗಳು. ಆಕೆಯ ಹೊರತು ಅವನಿಗೆ ಬೇರೆ ಗಂಡುಹೆಣ್ಣು ಮಕ್ಕಳೇ ಇರಲಿಲ್ಲ.</verse>
				<verse number="35">ಆಕೆಯನ್ನು ಕಾಣುತ್ತಲೆ ಅವನು ದುಃಖತಾಳಲು ಆಗದೆ ಬಟ್ಟೆಯನ್ನು ಹರಿದುಕೊಂಡು, “ಅಯ್ಯೋ ನನ್ನ ಮಗಳೇ, ನೀನು ನನ್ನನ್ನು ಎಂಥಾ ಯಾತನೆಗೆ ಈಡುಮಾಡಿದೆ; ನನಗೆ ಮಹಾಸಂಕಟವನ್ನುಂಟುಮಾಡಿದೆ! ನಾನು ಬಾಯಾರೆ ಸರ್ವೇಶ್ವರನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾಗದು,” ಎಂದು ಕೂಗಿಕೊಂಡನು.</verse>
				<verse number="36">ಆಕೆ ಅವನಿಗೆ, “ಅಪ್ಪಾ, ನೀನು ಬಾಯಾರೆ ಸರ್ವೇಶ್ವರನಿಗೆ ಹರಕೆ ಮಾಡಿದ ಮೇಲೆ ಅವರು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿ ತೀರಿಸಿದ್ದಾರೆ. ಆದ್ದರಿಂದ ನಿನ್ನ ಬಾಯಿಂದ ಬಂದದ್ದನ್ನೇ ನೆರವೇರಿಸು,” ಎಂದಳು.</verse>
				<verse number="37">ಆಕೆ ಪುನಃ ತನ್ನ ತಂದೆಗೆ, “ನನ್ನ ಬಿನ್ನಹವನ್ನು ಆಲಿಸು; ಎರಡು ತಿಂಗಳುಗಳವರೆಗೆ ನನ್ನನ್ನು ಬಿಡು, ನಾನು ನನ್ನ ಗೆಳತಿಯರೊಡನೆ ಗುಡ್ಡಪ್ರದೇಶಗಳಿಗೆ ಹೋಗಿ ನನ್ನ ಕನ್ಯಾವಸ್ಥೆಗಾಗಿ ಗೋಳಾಡುವೆನು,” ಎಂದಳು. ಅವನು, “ಎರಡು ತಿಂಗಳ ತನಕ ಹೋಗಿ ಬಾ,” ಎಂದು ಹೇಳಿ ಕಳುಹಿಸಿದನು.</verse>
				<verse number="38">ಆಕೆ ಸಖಿಯರ ಸಹಿತ ಗುಡ್ಡ ಪ್ರದೇಶಗಳಿಗೆ ಹೋಗಿ ತನ್ನ ಕನ್ಯಾವಸ್ಥೆಗಾಗಿ ಗೋಳಾಡಿದಳು.</verse>
				<verse number="39">ಎರಡು ತಿಂಗಳು ಕಳೆದ ನಂತರ ಆಕೆ ಮರಳಿ ತಂದೆಯ ಹತ್ತಿರ ಬಂದಳು. ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆ ಕನ್ಯೆಯಾಗಿಯೇ ಸತ್ತಳು.</verse>
				<verse number="40">ಇಸ್ರಯೇಲರ ಹೆಣ್ಣು ಮಕ್ಕಳು ಪ್ರತಿ ವರ್ಷ ನಾಲ್ಕುದಿವಸ ಗಿಲ್ಯಾದನಾದ ಯೆಪ್ತಾಹನ ಮಗಳ ಸ್ಮರಣೆಮಾಡುತ್ತಾರೆ. ಅವರಲ್ಲಿ ಇದೊಂದು ಪದ್ಧತಿ.</verse>
			</chapter>
			<chapter number="12">
				<verse number="1">ಎಫ್ರಯಿಮ್ಯರು ಒಟ್ಟುಗೂಡಿ ಜೋರ್ಡನನ್ನು ದಾಟಿ ಉತ್ತರದಿಕ್ಕಿಗೆ ಯೆಪ್ತಾಹನಿದ್ದಲ್ಲಿಗೆ ಹೋದರು. ಅವನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಏಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ,” ಎಂದರು.</verse>
				<verse number="2">ಅದಕ್ಕೆ ಅವನು, “ನನಗೂ ನನ್ನ ಜನರಿಗೂ ಅಮ್ಮೋನಿಯರೊಡನೆ ವ್ಯಾಜ್ಯವಿದ್ದಾಗ ನಾನು ನಿಮ್ಮನ್ನು ಕರೆದೆ; ಆದರೆ ನೀವು ಬಂದು ನನ್ನನ್ನು ಅವರ ಕೈಯಿಂದ ಬಿಡಿಸಲಿಲ್ಲ.</verse>
				<verse number="3">ನೀವು ಸಹಾಯ ಮಾಡುವುದಿಲ್ಲ ಎಂದು ತಿಳಿದು ಪ್ರಾಣವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆ; ಸರ್ವೇಶ್ವರ ಅವರನ್ನು ನನ್ನ ಕೈಗೆ ಒಪ್ಪಿಸಿದರು. ಹೀಗಿರಲು, ನೀವು ಈಗ ಬಂದು ನನ್ನೊಡನೆ ಕಲಹಮಾಡುವುದೇಕೆ?” ಎಂದು ಉತ್ತರಕೊಟ್ಟನು.</verse>
				<verse number="4">ಬಳಿಕ ಗಿಲ್ಯಾದಿನವರೆಲ್ಲರನ್ನು ಕೂಡಿಸಿ, ಎಫ್ರಯಿಮರಿಗೆ ವಿರುದ್ಧ ಯುದ್ಧಕ್ಕೆ ನಿಂತನು. “ಗಿಲ್ಯಾದ್ಯರಾದ ನೀವು ನಮ್ಮ ಮತ್ತು ಮನಸ್ಸೆ ಯವರ ಮಧ್ಯದಲ್ಲಿದ್ದು ಸ್ವಕುಲವನ್ನು ಬಿಟ್ಟು ಇಲ್ಲಿಗೆ ಓಡಿಬಂದಿರಿ” ಎಂದು ಎಫ್ರಯಿಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಕೋಪಗೊಂಡು ಅವರನ್ನು ಪೂರ್ಣವಾಗಿ ಸೋಲಿಸಿಬಿಟ್ಟರು.</verse>
				<verse number="5">ಇದಲ್ಲದೆ, ಅವರು ತಪ್ಪಿಸಿಕೊಂಡು ಹೋಗದಂತೆ ಎಫ್ರಯಿಮಿಗೆ ಹೋಗುವ ಜೋರ್ಡನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಯಿಮ್ಯರಲ್ಲಿ ಒಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿರಿ ಎಂದು ಅವರನ್ನು ಕೇಳಿದಾಗ ಅವರು, “ನೀನು ಎಫ್ರಯಿಮನೋ?’ ಎಂದು ಕೇಳುತ್ತಿದ್ದರು.</verse>
				<verse number="6">ಅವನು, “ಇಲ್ಲ” ಎಂದರೆ ಅವನಿಗೆ, “ನೀನು ‘ಷಿಬ್ಬೋಲೆತ್’ ಅನ್ನು” ಎಂದು ಹೇಳುತ್ತಿದ್ದರು. ಹಾಗೆ ಉಚ್ಚಸರಿಸಲಿಕ್ಕೆ ಬಾರದೆ ಅವನು “ಸಿಬ್ಬೋಲೆತ್” ಅನ್ನುತ್ತಿದ್ದನು. ಕೂಡಲೇ ಅವರು ಅವನನ್ನು ಹಿಡಿದು ಜೋರ್ಡನಿನ ಹಾಯಗಡಗಳ ಬಳಿಯಲ್ಲೇ ಕೊಂದುಹಾಕುತ್ತಿದ್ದರು. ಹೀಗೆ ಆ ಕಾಲದಲ್ಲಿ ಎಫ್ರಯಿಮರಲ್ಲಿ ನಾಲ್ವತ್ತೆರಡು ಸಾವಿರ ಜನರು ನಾಶವಾದರು.</verse>
				<verse number="7">ಗಿಲ್ಯಾದ್ಯನಾದ ಯೆಪ್ತಾಹನು ಇಸ್ರಯೇಲರನ್ನು ಆರು ವರ್ಷ ಪಾಲಿಸಿದನಂತರ ಸತ್ತನು. ಅವನ ಶವವನ್ನು ಗಿಲ್ಯಾದಿನ ಪಟ್ಟಣಗಳ ಒಂದರಲ್ಲಿ ಸಮಾಧಿಮಾಡಿದರು.</verse>
				<verse number="8">ಯೆಪ್ತಾಹನ ತರುವಾಯ ಬೆತ್ಲೆಹೇಮಿನವನಾದ ಇಬ್ಚಾನನು ಇಸ್ರಯೇಲರ ನ್ಯಾಯಸ್ಥಾಪಕನಾದ.</verse>
				<verse number="9">ಅವನಿಗೆ ಮೂವತ್ತು ಮಂದಿ ಗಂಡುಮಕ್ಕಳೂ ಮೂವತ್ತು ಮಂದಿ ಹೆಣ್ಣುಮಕ್ಕಳೂ ಇದ್ದರು. ತನ್ನ ಹೆಣ್ಣುಮಕ್ಕಳನ್ನು ಬೇರೆಯವರಿಗೆ ಕೊಟ್ಟು ಗಂಡುಮಕ್ಕಳಿಗಾಗಿ ಹೊರಗಿನ ಮೂವತ್ತು ಮಂದಿ ಕನ್ಯೆಯರನ್ನು ತಂದನು.</verse>
				<verse number="10">ಇವನು ಇಸ್ರಯೇಲರನ್ನು ಏಳು ವರ್ಷ ಪಾಲಿಸಿದ ನಂತರ ಮೃತನಾದನು. ಅವನ ಶವವನ್ನು ಬೆತ್ಲೆಹೇಮಿನಲ್ಲಿ ಸಮಾಧಿಮಾಡಿದರು.</verse>
				<verse number="11">ಇವನ ತರುವಾಯ ಜೆಬುಲೂನ್ಯನಾದ ಏಲೋನನು ಇಸ್ರಯೇಲರ ಪಾಲಕನಾಗಿ ಹತ್ತು ವರ್ಷಗಳವರೆಗೆ ಅವರನ್ನು ಪಾಲಿಸಿದ ನಂತರ ಮರಣ ಹೊಂದಿದನು.</verse>
				<verse number="12">ಅವನ ಶವವನ್ನು ಜೆಬುಲೂನ್ ದೇಶದ ಅಯ್ಯಾಲೋನಿನಲ್ಲಿ ಸಮಾಧಿಮಾಡಿದರು.</verse>
				<verse number="13">ಇವನ ತರುವಾಯ ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಯೇಲರ ಪಾಲಕನಾದನು.</verse>
				<verse number="14">ಇವನಿಗೆ ನಾಲ್ವತ್ತು ಮಂದಿ ಮಕ್ಕಳೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿ ಮಾಡುವುದಕ್ಕಾಗಿ ಎಪ್ಪತ್ತು ಹೇಸರಕತ್ತೆಗಳಿದ್ದವು. ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಯೇಲರನ್ನು ಎಂಟು ವರ್ಷ ಪಾಲಿಸಿದ ನಂತರ ಮರಣಹೊಂದಿದನು.</verse>
				<verse number="15">ಅವನ ಶವವನ್ನು ಎಫ್ರಯೀಮ್ ದೇಶದಲ್ಲಿ ಅಮಾಲೇಕ್ಯರ ಬೆಟ್ಟದ ಮೇಲಿರುವ ಪಿರಾತೋನಿನಲ್ಲಿ ಸಮಾಧಿಮಾಡಿದರು.</verse>
			</chapter>
			<chapter number="13">
				<verse number="1">ಇಸ್ರಯೇಲರು ಮತ್ತೊಮ್ಮೆ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ದ್ರೋಹಿಗಳಾದರು. ಆದುದರಿಂದ ಅವರನ್ನು ನಾಲ್ವತ್ತು ವರ್ಷಗಳ ತನಕ ಫಿಲಿಷ್ಟಿಯರ ಕೈಗೆ ಒಪ್ಪಿಸಲಾಯಿತು.</verse>
				<verse number="2">ಚೊರ್ಗಾ ಎಂಬ ಊರಲ್ಲಿ ದಾನ್ ಕುಲದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿ ಬಂಜೆಯಾಗಿದ್ದುದರಿಂದ ಅವನಿಗೆ ಮಕ್ಕಳಿರಲಿಲ್ಲ.</verse>
				<verse number="3">ಒಂದಾನೊಂದು ದಿನ ಸರ್ವೇಶ್ವರನ ದೂತ ಆಕೆಗೆ ಪ್ರತ್ಯಕ್ಷನಾಗಿ, “ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ.</verse>
				<verse number="4">ಈ ಕಾರಣ ಜಾಗರೂಕತೆಯಿಂದಿರು; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು; ಯಾವ ನಿಷಿದ್ಧ ಪದಾರ್ಥವನ್ನೂ ಊಟಮಾಡದಿರು.</verse>
				<verse number="5">ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇ ಬಾರದು. ಅವನು ಹುಟ್ಟಿನಿಂದ ದೇವರಿಗೆ ಪ್ರತಿಷ್ಠಿತನಾಗುವನು. ಅವನು ಇಸ್ರಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸುವುದಕ್ಕೆ ಪ್ರಾರಂಭಿಸುವನು,” ಎಂದನು.</verse>
				<verse number="6">ತರುವಾಯ ಆ ಸ್ತ್ರೀ ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವಪುರುಷ ನನ್ನ ಹತ್ತಿರ ಬಂದಿದ್ದನು. ಅವನ ರೂಪ ದೇವದೂತನ ರೂಪದಂತೆ ಘನಗಂಭೀರವಾಗಿತ್ತು. ‘ಎಲ್ಲಿಂದ ಬಂದಿರಿ?’ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.</verse>
				<verse number="7">ಆದರೆ ಆತ ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ; ಆದ್ದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು. ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಮಗು ಹುಟ್ಟಿದಂದಿನಿಂದ ಸಾಯುವವರೆಗೆ ಪ್ರತಿಷ್ಠಿತನಾಗಿರುವನು,’ ಎಂದು ಹೇಳಿದನು,” ಎಂದಳು.</verse>
				<verse number="8">ಮಾನೋಹನು ಇದನ್ನು ಕೇಳಿ ಸರ್ವೇಶ್ವರನಿಗೆ, “ಸ್ವಾಮೀ, ದಯವಿರಲಿ; ನೀವು ಕಳುಹಿಸಿದ ದೇವಪುರುಷ ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿರುವ ಮಗುವಿಗಾಗಿ ಮಾಡಬೇಕಾದುದ್ದನ್ನು ನಮಗೆ ಬೋಧಿಸಲಿ,” ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದರು.</verse>
				<verse number="9">ಆ ಮಹಿಳೆ ಹೊಲದಲ್ಲಿ ಕುಳಿತಿರುವಾಗ ದೇವದೂತನು ತಿರುಗಿ ಬಂದನು. ಆಕೆಯ ಗಂಡ ಮಾನೋಹನು ಅಲ್ಲಿರಲಿಲ್ಲ.</verse>
				<verse number="10">ಆದುದರಿಂದ ಆಕೆ ಬೇಗನೆ ಗಂಡನ ಬಳಿಗೆ ಹೋಗಿ, “ಮೊನ್ನೆ ನನಗೆ ಪ್ರತ್ಯಕ್ಷನಾದ ಪುರುಷ ತಿರುಗಿ ಬಂದಿದ್ದಾನೆ,” ಎಂದು ತಿಳಿಸಿದಳು.</verse>
				<verse number="11">ಅವನೆದ್ದು ಹೆಂಡತಿಯೊಡನೆ ಬಂದು ಆ ಪುರುಷನಿಗೆ, “ಮೊನ್ನೆ ಈಕೆಯೊಡನೆ ಮಾತಾಡಿದವರು ನೀವೋ,” ಎಂದು ಕೇಳಲು ಅವನು,</verse>
				<verse number="12">“ಹೌದು, ನಾನೇ,” ಎಂದನು. ಆಗ ಮಾನೋಹನು, “ನೀವು ಹೇಳಿದ್ದು ನೆರವೇರಿದಾಗ ನಾವು ಆ ಮಗುವಿಗಾಗಿ ಮಾಡತಕ್ಕದ್ದೇನು? ಅವನನ್ನು ಹೇಗೆ ನಡಿಸತಕ್ಕದ್ದು?” ಎಂದು ಕೇಳಿದನು.</verse>
				<verse number="13">ಸರ್ವೇಶ್ವರನ ದೂತನು ಮಾನೋಹನಿಗೆ, “ನಾನು ಹೇಳಿದ್ದನ್ನೆಲ್ಲಾ ಈಕೆ ಜಾಗರೂಕತೆಯಿಂದ ಕೈಗೊಳ್ಳಲಿ;</verse>
				<verse number="14">ದ್ರಾಕ್ಷಾಫಲವನ್ನು ತಿನ್ನದಿರಲಿ; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರಲಿ; ನಿಷಿದ್ಧಾಹಾರವನ್ನು ಮುಟ್ಟದಿರಲಿ; ಹೀಗೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಕೈಗೊಳ್ಳಲಿ,” ಎಂದನು.</verse>
				<verse number="15">ಮತ್ತೆ ಮಾನೋಹನು ಸರ್ವೇಶ್ವರನ ದೂತನನ್ನು, “ನಾವು ನಿಮಗಾಗಿ ಒಂದು ಹೋತಮರಿಯನ್ನು ಅಡಿಗೆ ಮಾಡಿ ತರುವವರೆಗೆ ದಯವಿಟ್ಟು ಇಲ್ಲೇ ನಿಲ್ಲಬೇಕು ಎಂದು ಬೇಡಿಕೊಂಡನು. ಅವನು,</verse>
				<verse number="16">“ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ಆಹಾರವನ್ನು ಊಟಮಾಡುವುದಿಲ್ಲ; ಬಲಿದಾನ ಮಾಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಸರ್ವೇಶ್ವರನಿಗೆ ಸಮರ್ಪಿಸು,” ಎಂದನು. ಅವನು ಸರ್ವೇಶ್ವರನ ದೂತನೆಂಬುದು ಮಾನೋಹನಿಗೆ ಗೊತ್ತಿರಲಿಲ್ಲ.</verse>
				<verse number="17">ಆದುದರಿಂದ ಅವನು ಆ ದೂತನನ್ನು, “ನೀವು ಹೇಳಿದ್ದು ನೆರವೇರಿದಾಗ ನಿಮ್ಮನ್ನು ಸನ್ಮಾನಿಸಬೇಕೆಂದಿರುತ್ತೇವೆ, ನಿಮ್ಮ ಹೆಸರೇನು?” ಎಂದು ಕೇಳಿದನು.</verse>
				<verse number="18">ಸರ್ವೇಶ್ವರನ ದೂತನು, “ನನ್ನ ಹೆಸರನ್ನು ಕೇಳುವುದೇಕೆ? ಅದು ಆಶ್ಚರ್ಯಕರವಾದದ್ದು” ಎಂದನು.</verse>
				<verse number="19">ಮಾನೋಹನು ಹೋತಮರಿಯನ್ನೂ ಧಾನ್ಯದ್ರವ್ಯವನ್ನೂ ತಂದು ಬಂಡೆಯ ಮೇಲಿಟ್ಟು ಸರ್ವೇಶ್ವರನಿಗೆ ಸಮರ್ಪಿಸಿದನು. ಮಾನೋಹನು ಮತ್ತು ಅವನ ಹೆಂಡತಿ ನೋಡುತ್ತಿರುವಾಗಲೇ ಸರ್ವೇಶ್ವರನ ದೂತನು ಒಂದು ಆಶ್ಚರ್ಯಕಾರ್ಯ ಮಾಡಿದನು.</verse>
				<verse number="20">ಅದೇನೆಂದರೆ ಬಲಿಪೀಠದಿಂದ ಆಕಾಶಕ್ಕೆ ಹೋಗುತ್ತಿದ್ದ ಅಗ್ನಿಜ್ವಾಲೆಯೊಳಗೆ ಅವನು ಮೇಲಕ್ಕೇರಿಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲಾಗಿ ಬಿದ್ದರು.</verse>
				<verse number="21">ಸರ್ವೇಶ್ವರನ ದೂತನು ಮಾನೋಹನಿಗೂ ಅವನ ಹೆಂಡತಿಗೂ ಪುನಃ ಕಾಣಿಸಲಿಲ್ಲ.</verse>
				<verse number="22">ಆಗ ಮಾನೋಹನು ಆತ ಸರ್ವೇಶ್ವರನ ದೂತನೆಂದು ತಿಳಿದು ತನ್ನ ಹೆಂಡತಿಗೆ, “ನಾವು ಸಾಯಬೇಕು.</verse>
				<verse number="23">ದೇವರನ್ನು ಕಣ್ಣಾರೆ ಕಂಡೆವಲ್ಲಾ!” ಎಂದನು. ಆಕೆ ಅವನಿಗೆ, “ಸರ್ವೇಶ್ವರ ನಮ್ಮನ್ನು ಕೊಲ್ಲಬೇಕೆಂದಿದ್ದರೆ ಅವರು ನಮ್ಮ ಕೈಯಿಂದ ಬಲಿಯನ್ನೂ ನೈವೇದ್ಯವನ್ನೂ ಸ್ವೀಕರಿಸುತ್ತಿರಲಿಲ್ಲ. ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ; ಹೇಳುತ್ತಿರಲಿಲ್ಲ,” ಎಂದಳು.</verse>
				<verse number="24">ಆ ಮಹಿಳೆ ಒಬ್ಬ ಮಗನನ್ನು ಹೆತ್ತು ಅವನಿಗೆ ‘ಸಂಸೋನ’ ಎಂದು ಹೆಸರಿಟ್ಟಳು. ಹುಡುಗ ಬೆಳೆದು ದೊಡ್ಡವನಾದ. ಸರ್ವೇಶ್ವರನ ಆಶೀರ್ವಾದ ಅವನ ಮೇಲಿತ್ತು.</verse>
				<verse number="25">ಇದಲ್ಲದೆ, ಅವನು ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಸರ್ವೇಶ್ವರನ ಆತ್ಮ ಅವನನ್ನು ಚೇತನಗೊಳಿಸತೊಡಗಿತು.</verse>
			</chapter>
			<chapter number="14">
				<verse number="1">ಸಂಸೋನನು ತಿಮ್ನಾ ಊರಿಗೆ ಇಳಿದುಹೋಗಿ ಅಲ್ಲಿನ ಫಿಲಿಷ್ಟಿಯರ ಹೆಣ್ಣುಗಳಲ್ಲಿ ಒಬ್ಬಳನ್ನು ನೋಡಿದನು.</verse>
				<verse number="2">ತಂದೆ ತಾಯಿಗಳ ಬಳಿಗೆ ಬಂದು ಅವರಿಗೆ, “ನಾನು ತಿಮ್ನಾ ಊರಲ್ಲಿ ಒಬ್ಬ ಫಿಲಿಷ್ಟಿಯ ಹೆಣ್ಣನ್ನು ನೋಡಿ ಇದ್ದೇನೆ; ಆಕೆಯನ್ನು ನನಗೆ ಮದುವೆ ಮಾಡಿಕೊಡಿ,” ಎಂದು ಹೇಳಿದನು.</verse>
				<verse number="3">ಆಗ ಅವರು ಅವನಿಗೆ, “ಸುನ್ನತಿಯಿಲ್ಲದ ಫಿಲಿಷ್ಟಿಯರ ಹೆಣ್ಣನ್ನು ವರಿಸಬೇಕೆಂದಿರುವೆಯಾ? ನಿನ್ನ ಬಂಧುಗಳಲ್ಲಿ ಅದೂ ನಮ್ಮ ಎಲ್ಲಾ ಜನರಲ್ಲಿ ನಿನಗೆ ಹೆಣ್ಣು ಸಿಕ್ಕುವುದಿಲ್ಲವೇ?” ಎಂದು ಪ್ರತಿಭಟಿಸಿದರು. ಅವನು, “ನನಗಾಗಿ ಆಕೆಯನ್ನೇ ತನ್ನಿ. ಆಕೆಯನ್ನೇ ಮೆಚ್ಚಿಕೊಂಡಿದ್ದೇನೆ,” ಎಂದನು.</verse>
				<verse number="4">ಫಿಲಿಷ್ಟಿಯರ ದಂಡನೆಗೆ ಕಾರಣವನ್ನು ಹುಡುಕುತ್ತಿದ್ದ ಸರ್ವೇಶ್ವರನ ಪ್ರೇರಣೆಯಿಂದಲೇ ಇದೆಲ್ಲ ಸಂಭವಿಸಿತೆಂದು ಅವನ ತಂದೆತಾಯಿಗಳಿಗೆ ಗೊತ್ತಾಗಲಿಲ್ಲ. ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಯೇಲರ ಮೇಲೆ ದೊರೆತನ ನಡೆಸುತ್ತಿದ್ದರು.</verse>
				<verse number="5">ಸಂಸೋನನು ತನ್ನ ತಂದೆತಾಯಿಗಳ ಸಮೇತ ತಿಮ್ನಾ ಊರಿಗೆ ಹೊರಟು ಅಲ್ಲಿನ ದ್ರಾಕ್ಷಿತೋಟಗಳ ಬಳಿಗೆ ಬಂದನು. ಅಲ್ಲಿ ಒಂದು ಪ್ರಾಯದ ಸಿಂಹ ಗರ್ಜಿಸುತ್ತಾ ಅವನೆದುರಿಗೆ ಬಂದಿತು.</verse>
				<verse number="6">ಸರ್ವೇಶ್ವರನ ಆತ್ಮ ಅವನ ಮೇಲೆ ಫಕ್ಕನೆ ಇಳಿದು ಬಂದಿತು. ಆಗ ಅವನು ಕೈಯಲ್ಲಿ ಏನೂ ಇಲ್ಲದಿದ್ದರೂ ಆ ಸಿಂಹವನ್ನು ಹೋತಮರಿಯನ್ನೋ ಎಂಬಂತೆ ಸೀಳಿಬಿಟ್ಟನು. ಈ ಸಂಗತಿಯನ್ನು ತಂದೆತಾಯಿಗಳಿಗೆ ತಿಳಿಸಲಿಲ್ಲ.</verse>
				<verse number="7">ಅನಂತರ ಅವನು ಊರೊಳಗೆ ಹೋಗಿ ಆ ಮಹಿಳೆಯನ್ನು ಮಾತಾಡಿಸಿ ಆಕೆಯನ್ನು ಮೆಚ್ಚಿಕೊಂಡನು.</verse>
				<verse number="8">ಕೆಲವು ದಿವಸಗಳಾದ ಮೇಲೆ ಅವನು ಆಕೆಯನ್ನು ವರಿಸುವುದಕ್ಕಾಗಿ ಮತ್ತೆ ಆ ಊರಿಗೆ ಹೋಗುತ್ತಿದ್ದಾಗ, ದಾರಿ ಬಿಟ್ಟು, ಸಿಂಹದ ಹೆಣವನ್ನು ನೋಡುವುದಕ್ಕೆ ಹೋದನು. ಅದರ ಒಡಲಲ್ಲಿ ಜೇನುಹುಳುಗಳನ್ನೂ ಜೇನನ್ನೂ ಕಂಡು</verse>
				<verse number="9">ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರೂ ತಿಂದರು. ಆದರೆ ಅದು ತನಗೆ ಸಿಂಹದ ಒಡಲಲ್ಲಿ ಸಿಕ್ಕಿತೆಂಬುದನ್ನು ಅವರಿಗೆ ತಿಳಿಸಲಿಲ್ಲ.</verse>
				<verse number="10">ಸಂಸೋನನ ತಂದೆ ಹೆಣ್ಣಿನ ಮನೆಗೆ ಬಂದ ಮೇಲೆ ಸಂಸೋನನು ಯೌವನಸ್ಥರ ಪದ್ಧತಿಯ ಪ್ರಕಾರ ಅಲ್ಲಿ ಔತಣವನ್ನು ಸಿದ್ಧಮಾಡಿಸಿದನು.</verse>
				<verse number="11">ಫಿಲಿಷ್ಟಿಯನು ಅವನನ್ನು ನೋಡಿದಾಗ ತಮ್ಮ ಮಧ್ಯದಿಂದ ಮೂವತ್ತು ಮಂದಿ ‘ಆಪ್ತರನ್ನು’ ಆರಿಸಿ ಅವನ ಜೊತೆಯಲ್ಲಿ ಇರಿಸಿದರು.</verse>
				<verse number="12">ಸಂಸೋನನು ಇವರಿಗೆ, “ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಡಿಸಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷ ವಸ್ತ್ರಗಳನ್ನೂ ಕೊಡುತ್ತೇನೆ.</verse>
				<verse number="13">ನಿಮ್ಮಿಂದ ಆಗದೆಹೋದರೆ ನೀವು ನನಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡಬೇಕು” ಎನ್ನಲು ಅವರು ಅವನಿಗೆ, “ನಿನ್ನ ಒಗಟನ್ನು ಹೇಳು, ಕೇಳೋಣ,” ಎಂದು ಹೇಳಿದರು.</verse>
				<verse number="14">ಆಗ ಅವನು, “ತಿಂದುಬಿಡುವಂಥದರಿಂದ ತಿನ್ನತಕ್ಕದ್ದು ದೊರಕಿತು ಕ್ರೂರವಾದದ್ದರಿಂದ ಮಧುರವಾದದ್ದು ಸಿಕ್ಕಿತು” ಎಂದು ಹೇಳಿದನು. ಮೂರು ದಿನಗಳಾದರೂ ಅವರು ಅದನ್ನು ಬಿಡಿಸಲಾರದೆ ಹೋದರು.</verse>
				<verse number="15">ಅವರು ಏಳನೆಯ ದಿನದಲ್ಲಿ ಸಂಸೋನನ ಹೆಂಡತಿಗೆ, “ನಿನ್ನ ಗಂಡನನ್ನು ಮರುಳುಗೊಳಿಸಿ ಅವನಿಂದ ಒಗಟಿನ ಅರ್ಥವನ್ನು ತಿಳಿದುಕೋ; ಇಲ್ಲವಾದರೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯವರನ್ನೂ ಬೆಂಕಿಯಿಂದ ಸುಟ್ಟುಬಿಡುತ್ತೇವೆ; ನಮಗಿರುವುದೆಲ್ಲವನ್ನೂ ಕಸಿದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ಕರಿಸಿದಿರೋ?” ಎಂದರು.</verse>
				<verse number="16">ಆಕೆ ಸಂಸೋನನ ಮುಂದೆ ಅಳುತ್ತಾ, “ನೀವು ನನ್ನನ್ನು ಪ್ರೀತಿಸುವುದಿಲ್ಲ, ದ್ವೇಷಿಸುತ್ತೀರಷ್ಟೇ; ನನ್ನ ಜನರಿಗೆ ಒಗಟನ್ನು ಹೇಳಿದ್ದೀರಿ, ಅದರ ಅರ್ಥವನ್ನು ನನಗೆ ತಿಳಿಸಲಿಲ್ಲವಲ್ಲಾ” ಎಂದು ಪೀಡಿಸಿದಳು. ಅವನು ಆಕೆಗೆ, “ಇದನ್ನು ನನ್ನ ತಂದೆತಾಯಿಗಳಿಗೂ ಹೇಳಲಿಲ್ಲ; ನಿನಗೆ ಹೇಳುವೆನೋ?” ಎಂದು ಉತ್ತರಕೊಟ್ಟನು.</verse>
				<verse number="17">ಆಕೆ ಔತಣದ ಏಳು ದಿನಗಳಲ್ಲೂ ಅವನ ಮುಂದೆ ಅಳುತ್ತಿದ್ದಳು. ಏಳನೆಯ ದಿನ ಆಕೆ ಬಹಳವಾಗಿ ಪೀಡಿಸಿದ್ದರಿಂದ ಅವನು ಹೇಳೇಬಿಟ್ಟನು. ಆಕೆ ಒಗಟಿನ ಅರ್ಥವನ್ನು ತನ್ನ ಜನರಿಗೆ ತಿಳಿಸಿದಳು.</verse>
				<verse number="18">ಅವರು ಏಳನೆಯ ದಿನ ಸೂರ್ಯಾಸ್ತಮಾನಕ್ಕೆ ಮೊದಲೇ ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು” ಸಿಂಹಕ್ಕಿಂತ ಕ್ರೂರವಾದದ್ದು ಯಾವುದು?” ಎಂದು ಹೇಳಿದರು. ಅವನು, “ನೀವು ನನ್ನ ಕಡಸಿನಿಂದ ಉಳದಿದ್ದರೆ ಒಗಟನ್ನು ಬಿಡಿಸಲು ನಿಮ್ಮಿಂದಾಗುತ್ತಿರಲಿಲ್ಲ,” ಎಂದನು.</verse>
				<verse number="19">ಸರ್ವೇಶ್ವರನ ಆತ್ಮ ಫಕ್ಕನೆ ಅವನ ಮೇಲೆ ಬಂದಿತು. ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು ಅವರ ವಸ್ತ್ರಗಳನ್ನು ಸುಲಿದುಕೊಂಡು ಒಗಟನ್ನು ಬಿಡಿಸಿದವರಿಗೆ ತಂದುಕೊಟ್ಟನು. ಬಳಿಕ ಕೋಪಗೊಂಡು ತನ್ನ ತಂದೆಯ ಮನೆಗೆ ಹೋದನು.</verse>
				<verse number="20">ಇತ್ತ ಸಂಸೋನನ ಹೆಂಡತಿಯನ್ನು ಅವನ ಆಪ್ತರೊಬ್ಬನಿಗೆ ಮದುವೆ ಮಾಡಿಕೊಟ್ಟರು.</verse>
			</chapter>
			<chapter number="15">
				<verse number="1">ಕೆಲವು ದಿನಗಳಾದ ಮೇಲೆ ಗೋದಿಯ ಸುಗ್ಗಿಯಲ್ಲಿ ಸಂಸೋನನು ಒಂದು ಹೋತಮರಿಯನ್ನು ತೆಗೆದುಕೊಂಡು ತನ್ನ ಹೆಂಡತಿಯನ್ನು ನೋಡುವುದಕ್ಕೆ ಹೋದನು. ಆಕೆಯ ತಂದೆ ಬಳಿಗೆ ಬಂದನು; “ನನ್ನ ಹೆಂಡತಿಯ ಒಳಗಿನ ಕೋಣೆಗೆ ಹೋಗಬಿಡು,” ಎಂದನು. ಅವನು, “ಹೋಗಕೂಡದು.</verse>
				<verse number="2">ನೀನು ನಿಜವಾಗಿ ಆಕೆಯನ್ನು ದ್ವೇಷಮಾಡುತ್ತೀಯೆಂದು ನಿನ್ನ ಆಪ್ತರೊಬ್ಬನಿಗೆ ಮದುವೆಮಾಡಿಕೊಟ್ಟೆ. ಆಕೆಯ ತಂಗಿ ಆಕೆಗಿಂತ ಸುಂದರಿಯಾಗಿದ್ದಾಳೆ; ಈಕೆ ನಿನಗೆ ಇರಲಿ,” ಎಂದನು.</verse>
				<verse number="3">ಆಗ ಸಂಸೋನನು, “ಈ ಸಾರಿ ಫಿಲಿಷ್ಟಿಯರಿಗೆ ನಷ್ಟ ಉಂಟುಮಾಡಿದರೆ ತಪ್ಪು ನನ್ನದಲ್ಲ,” ಎಂದುಕೊಂಡು ಹೋಗಿ</verse>
				<verse number="4">ಮುನ್ನೂರು ನರಿಗಳನ್ನು ಹಿಡಿದನು. ಒಂದರ ಬಾಲಕ್ಕೆ ಇನ್ನೊಂದು ಬಾಲವನ್ನು ಸೇರಿಸಿ ಕಟ್ಟಿದನು. ಹೀಗೆ ಎರಡೆರಡು ಬಾಲಗಳ ನಡುವೆ ಒಂದೊಂದು ಪಂಜನ್ನು ಸಿಕ್ಕಿಸಿ ಪಂಜುಗಳಿಗೆ ಬೆಂಕಿಹೊತ್ತಿಸಿ</verse>
				<verse number="5">ಆ ನರಿಗಳನ್ನು ‘ಫಿಲಿಷ್ಟಿಯರ ಬೆಳೆ ತುಂಬಿದ ಹೊಲಗಳಿಗೆ ಬಿಟ್ಟು ಅವರ ತೆನೆಗೂಡುಗಳನ್ನೂ ಇನ್ನೂ ಕೊಯ್ಯದೆ ಇದ್ದ ಪೈರುಗಳನ್ನೂ ಸುಟ್ಟುಬಿಟ್ಟನು. ಎಣ್ಣೆಯ ಮರಗಳ ತೋಟಗಳು ಸಹ ಸುಟ್ಟುಹೋದವು.</verse>
				<verse number="6">ಫಿಲಿಷ್ಟಿಯರು ಇದನ್ನು ಮಾಡಿದವರಾರೆಂದು ವಿಚಾರಿಸುವಲ್ಲಿ ತಿಮ್ನಾ ಊರಿನವನ ಅಳಿಯನಾದ ಸಂಸೋನನೆಂದು ಗೊತ್ತಾಯಿತು. ಅವನ ಮಾವ ಅವನ ಹೆಂಡತಿಯನ್ನು ಬೇರೊಬ್ಬನಿಗೆ ಕೊಟ್ಟುಬಿಟ್ಟದ್ದೇ ಇದಕ್ಕೆ ಕಾರಣವೆಂದು ಅವರು ತಿಳಿದು, ಅಲ್ಲಿಗೆ ಬಂದು ಆಕೆಯನ್ನೂ ಆಕೆಯ ತಂದೆಯನ್ನೂ ಸುಟ್ಟುಬಿಟ್ಟರು.</verse>
				<verse number="7">ಸಂಸೋನನು ಅವರಿಗೆ, “ನೀವು ಹೀಗೆ ಮಾಡಿದ್ದರಿಂದ ನಾನು ನಿಮಗೆ ಮುಯ್ಯಿ ತೀರಿಸದೆ ಬಿಡುವುದಿಲ್ಲ,” ಎಂದು ಹೇಳಿ</verse>
				<verse number="8">ಅವರ ತೊಡೆ ಸೊಂಟಗಳನ್ನು ಮುರಿದು, ಅವರನ್ನು ಸಂಹರಿಸಿಬಿಟ್ಟನು. ಅನಂತರ ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.</verse>
				<verse number="9">ಆಗ ಫಿಲಿಷ್ಟಿಯರು ಹೊರಟು ಯೆಹೂದಾ ಪ್ರಾಂತ್ಯದ ಲೆಹೀ ಎಂಬಲ್ಲಿಗೆ ಹೋಗಿ ಪಾಳೆಯ ಮಾಡಿಕೊಂಡು ಯುದ್ಧಕ್ಕೆ ನಿಂತರು.</verse>
				<verse number="10">“ನೀವು ನಮಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದೇಕೆ?” ಎಂದು ಯೆಹೂದ್ಯರು ಅವರನ್ನು ಕೇಳಿದರು. ಅವರು, “ಸಂಸೋನನನ್ನು ಹಿಡಿದು, ಬಂಧಿಸಿ, ಅವನು ನಮಗೆ ಮಾಡಿದಂತೆಯೇ ಅವನಿಗೂ ಮಾಡಬೇಕೆಂದು ಬಂದೆವು,” ಎಂದು ಉತ್ತರಕೊಟ್ಟರು.</verse>
				<verse number="11">ಮೂರು ಸಾವಿರ ಮಂದಿ ಯೆಹೂದ್ಯರು ಏಟಾಮ್ ಗಿರಿಗೆ ಹೋಗಿ ಸಂಸೋನನಿಗೆ, “ಫಿಲಿಷ್ಟಿಯರು ನಮ್ಮ ಮೇಲೆ ದೊರೆತನ ಮಾಡುತ್ತಿದ್ದಾರೆಂಬುದು ನಿನಗೆ ಗೊತ್ತಿಲ್ಲವೇ? ಹೀಗೆ ಏಕೆ ಮಾಡಿದೆ,” ಎಂದು ಕೇಳಲು ಅವನು, “ಅವರು ನನಗೆ ಮಾಡಿದಂತೆಯೇ ನಾನು ಅವರಿಗೆ ಮಾಡಿದ್ದೇನೆ,” ಎಂದನು.</verse>
				<verse number="12">ಅವರು, “ನಾವು ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸಬೇಕೆಂದು ಬಂದಿದ್ದೇವೆ,” ಎನ್ನಲು ಸಂಸೋನನು, “ಹಾಗಾದರೆ ನೀವು ನನ್ನನ್ನು ಕೊಲ್ಲುವುದಿಲ್ಲವೆಂದು ಆಣೆಮಾಡಿ” ಎಂದನು.</verse>
				<verse number="13">ಅದಕ್ಕೆ ಅವರು, “ನಾವು ಸತ್ಯವಾಗಿ ನಿನ್ನನ್ನು ಕೊಲ್ಲುವುದಿಲ್ಲ; ನಿನ್ನನ್ನು ಕಟ್ಟಿ ಫಿಲಿಷ್ಟಿಯರ ಕೈಗೆ ಒಪ್ಪಿಸುತ್ತೇವೆ,” ಎಂದು ಹೇಳಿ ಅವನನ್ನು ಎರಡು ಹೊಸ ಹಗ್ಗಗಳಿಂದ ಕಟ್ಟಿ ಗಿರಿಯಿಂದ ತಂದರು.</verse>
				<verse number="14">ಸಂಸೋನನು ಲೆಹೀಯ ಸಮೀಪಕ್ಕೆ ಬರಲು ಫಿಲಿಷ್ಟಿಯರು ಅವನನ್ನು ಕಂಡು ಆರ್ಭಟಿಸಿದರು. ಸರ್ವೇಶ್ವರನ ಆತ್ಮ ಅವನ ಮೇಲೆ ಬಂದುದರಿಂದ ಅವನ ರಟ್ಟೆಗಳಿಗೆ ಸುತ್ತಲೂ ಕಟ್ಟಿದ್ದ ಹಗ್ಗಗಳು ಸುಟ್ಟ ಸೆಣಬಿನ ಹಾಗಾದವು; ಕೈಗೆ ಹಾಕಿದ ಬೇಡಿಗಳು ಕಳಚಿ ಬಿದ್ದವು.</verse>
				<verse number="15">ಅಲ್ಲೇ ಒಂದು ಕತ್ತೆಯ ದವಡೆ ಎಲುಬು ಬಿದ್ದಿತ್ತು. ಅದು ಇನ್ನೂ ಹಸಿ ಇತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಹತಿಸಿಬಿಟ್ಟು,</verse>
				<verse number="16">“ಕತ್ತೆಯ ದವಡೆ ಎಲುಬಿನಿಂದ ಸಾವಿರ ಜನರನ್ನು ವಧಿಸಿದೆ; ಕತ್ತೆಯ ದವಡೆ ಎಲುಬಿನಿಂದ ಹೆಣಗಳನ್ನು ರಾಶಿರಾಶಿಯಾಗಿ ಬೀಳಿಸಿದೆ” ಎಂದು ಹೇಳಿ</verse>
				<verse number="17">ತನ್ನ ಕೈಯಲ್ಲಿದ್ದ ಎಲುಬನ್ನು ಬಿಸಾಡಿದನು. ಆ ಸ್ಥಳಕ್ಕೆ ‘ರಾಮತ್ ಲೆಹೀ\ ಎಂದು ಹೆಸರಾಯಿತು.</verse>
				<verse number="18">ಇದರಿಂದಾಗಿ ಸಂಸೋನನಿಗೆ ಬಹಳ ದಾಹವಾಯಿತು. ಅವನು ಸರ್ವೇಶ್ವರನಿಗೆ, “ನೀವು ನಿಮ್ಮ ದಾಸನ ಮುಖಾಂತರ ಇಂಥ ಮಹಾ ಜಯವನ್ನು ದಯಪಾಲಿಸಿದಿರಿ. ಆದರೆ ಈಗ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೇ?’ ಎಂದು ಮೊರೆಯಿಟ್ಟನು.</verse>
				<verse number="19">ದೇವರು ಲೆಹೀಯಲ್ಲಿ ಒರಳಬಂಡೆಯನ್ನು ಸೀಳಿ ಅದರೊಳಗಿಂದ ನೀರು ಬರುವಂತೆ ಮಾಡಿದರು. ಅವನು ಕುಡಿದು ಪುನಃ ಚೇತನಗೊಂಡನು. ಆದುದರಿಂದ ಅದಕ್ಕೆ ‘ಏನ್ ಹಕ್ಕೋರೇ’ ಎಂದು ಹೆಸರಾಯಿತು; ಅದು ಇಂದಿನವರೆಗೂ ಲೆಹೀಯಲ್ಲಿದೆ.</verse>
				<verse number="20">ಫಿಲಿಷ್ಟಿಯರ ಕಾಲದಲ್ಲಿ ಸಂಸೋನನು ಇಸ್ರಯೇಲರನ್ನು ಇಪ್ಪತ್ತು ವರ್ಷಗಳವರೆಗೆ ಪಾಲಿಸಿದನು.</verse>
			</chapter>
			<chapter number="16">
				<verse number="1">ತರುವಾಯ ಸಂಸೋನನು ಗಾಜಾಕ್ಕೆ ಹೋದಾಗ ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಅವಳ ಬಳಿಗೆ ಹೋದನು.</verse>
				<verse number="2">ಸಂಸೋನನು ಬಂದಿರುವುದು ಗಾಜಾದವರಿಗೆ ಗೊತ್ತಾಯಿತು? ಅವರು ಬಂದು ಅವನನ್ನು ಸುತ್ತಿಕೊಂಡರು. ಸೂರ್ಯೋದಯವಾಗುತ್ತಲೇ ಅವನನ್ನು ಕೊಂದು ಹಾಕಬೇಕೆಂದುಕೊಂಡು ರಾತ್ರಿಯೆಲ್ಲಾ ಊರಬಾಗಿಲಲ್ಲೇ ಹೊಂಚುಹಾಕುತ್ತಾ ಸುಮ್ಮನಿದ್ದರು.</verse>
				<verse number="3">ಸಂಸೋನನು ಮಲಗಿ ಮಧ್ಯರಾತ್ರಿಯಲ್ಲೆದ್ದು ಊರಬಾಗಿಲುಗಳನ್ನೂ ಕದಗಳನ್ನೂ ಅದರ ಎರಡು ನಿಲುವು ಪಟ್ಟಿಗಳನ್ನೂ ಅಗುಳಿಗಳನ್ನೂ ಕಿತ್ತು ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿನ ಎದುರಿಗಿರುವ ಬೆಟ್ಟದ ತುದಿಯ ಮೇಲೆ ಇಟ್ಟನು.</verse>
				<verse number="4">ಅನಂತರ ಸಂಸೋನನು ಸೋರೇಕ್ ತಗ್ಗಿನಲ್ಲಿ ವಾಸವಾಗಿದ್ದ ದೆಲೀಲಾ ಎಂಬ ಮಹಿಳೆಯಿಂದ ಮೋಹಿತನಾದನು.</verse>
				<verse number="5">ಫಿಲಿಷ್ಟಿಯರ ಮುಖಂಡರು ಅವಳ ಬಳಿಗೆ ಹೋಗಿ ಅವಳಿಗೆ, “ನೀನು ಅವನನ್ನು ಮರುಳುಗೊಳಿಸಿ ಅವನ ಮಹಾಶಕ್ತಿಯ ಮೂಲ ಯಾವುದೆಂಬುದನ್ನು ತಿಳಿದುಕೋ: ನಾವು ಅವನನ್ನು ಗೆದ್ದು, ಕಟ್ಟಿ, ಅಡಗಿಸುವ ವಿಧಾನವನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು, ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ಬೆಳ್ಳಿ ನಾಣ್ಯಗಳನ್ನು ಕೊಡುವೆವು,” ಎಂದು ಹೇಳಿದರು.</verse>
				<verse number="6">ದೆಲೀಲಳು ಸಂಸೋನನಿಗೆ, “ನಿಮ್ಮ ಇಂಥ ಮಹಾಶಕ್ತಿ ಹೇಗೆ ಬಂತು? ನಿಮ್ಮನ್ನು ಕಟ್ಟಿ ಅಡಗಿಸುವುದು ಹೇಗೆ ಎಂಬುದನ್ನು ದಯವಿಟ್ಟು ನನಗೆ ತಿಳಿಸಿ,” ಎಂದಳು.</verse>
				<verse number="7">ಅವನು, “ಕರುಳಿನ ಏಳು ಹಸಿ ತಂತಿಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದು ಹೇಳಿದನು.</verse>
				<verse number="8">ಫಿಲಿಷ್ಟಿಯರ ಮುಖಂಡರು ಅಂಥ ಏಳು ಹಸಿ ತಂತಿಗಳನ್ನು ಅವಳಿಗೆ ತಂದುಕೊಟ್ಟರು.</verse>
				<verse number="9">ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿಟ್ಟು ಅವುಗಳಿಂದ ಅವನನ್ನು ಕಟ್ಟಿಸಿ, “ಸಂಸೋನರೇ, ನಿಮ್ಮ ಮೇಲೆ ಫಿಲಿಷ್ಟಿಯರು ಬಂದರು,” ಎಂದು ಕೂಗಿದಳು. ಅವನು ಬೆಂಕಿ ತಗಲಿದ ಸೆಣಬಿನ ದಾರವನ್ನೋ ಎಂಬಂತೆ ಆ ತಂತಿಗಳನ್ನು ಹರಿದುಬಿಟ್ಟನು. ಹೀಗೆ ಅವನ ಶಕ್ತಿಯ ರಹಸ್ಯ ತಿಳಿಯದೆಹೋಯಿತು.</verse>
				<verse number="10">ದೆಲೀಲಳು ಮತ್ತೊಮ್ಮೆ ಸಂಸೋನನಿಗೆ, “ನೀವು ನನ್ನನ್ನು ವಂಚಿಸಿದಿರಿ; ಸುಳ್ಳಾಡದೆ ನಿಮ್ಮನ್ನು ಯಾವುದರಿಂದ ಕಟ್ಟಬಹುದೆಂಬುದನ್ನು ದಯವಿಟ್ಟು ನನಗೆ ತಿಳಿಸಿ,” ಎಂದಳು.</verse>
				<verse number="11">ಅವನು ಅವಳಿಗೆ, “ಯಾವುದಕ್ಕೂ ಉಪಯೋಗಿಸದ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದನು.</verse>
				<verse number="12">ಅವನು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿರಿಸಿ ಹೊಸ ಹಗ್ಗಗಳನ್ನು ತೆಗೆದುಕೊಂಡು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನರೇ, ಫಿಲಿಷ್ಟಿಯರು ಬಂದಿದ್ದಾರೆ,” ಎಂದು ಕೂಗಲು ಅವನೆದ್ದು ತೋಳುಗಳಿಗೆ ಕಟ್ಟಿದ್ದ ಹಗ್ಗಗಳನ್ನು ದಾರವನ್ನೋ ಎಂಬಂತೆ ಹರಿದುಬಿಟ್ಟನು.</verse>
				<verse number="13">ಆಗ ದೆಲೀಲಳು ಸಂಸೋನನಿಗೆ, “ನೀವು ತಿರುಗಿ ನನ್ನನ್ನು ವಂಚಿಸಿದಿರಿ, ಸುಳ್ಳಾಡಿದಿರಿ; ನಿಮ್ಮನ್ನು ಯಾವುದರಿಂದ ಕಟ್ಟಬಹುದೆಂದು ತಿಳಿಸಿ,” ಎನ್ನಲು ಅವನು, “ನನ್ನ ತಲೆಗೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯ್ದರೆ ಸಾಕು,” ಎಂದು ಹೇಳಿದನು.</verse>
				<verse number="14">ಅವಳು ಅವನ ತಲೆಗೂದಲಿನ ಏಳು ಜಡೆಗಳನ್ನು ಗೂಟಕ್ಕೆ ಭದ್ರಮಾಡಿ, “ಸಂಸೋನರೇ, ಫಿಲಿಷ್ಟಿಯರು ಬಂದಿದ್ದಾರೆ,” ಎಂದು ಕೂಗಿದಳು. ಅವನು ನಿದ್ರೆಯಿಂದ ಎಚ್ಚೆತ್ತು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು.</verse>
				<verse number="15">ಆಕೆ ಇನ್ನೊಮ್ಮೆ ಅವನಿಗೆ, “ನಿನ್ನನ್ನು ಪ್ರೀತಿಸುತ್ತೇನೆ” ಎಂದು ನೀವು ನನಗೆ ಹೇಗೆ ಹೇಳಬಹುದು? ನಿಮ್ಮ ಮನಸ್ಸು ನನ್ನ ಮೇಲೆ ಇಲ್ಲವೇ ಇಲ್ಲ; ಮೂರು ಸಾರಿ ವಂಚಿಸಿದಿರಿ. ನಿಮಗೆ ಇಂಥ ಮಹಾಶಕ್ತಿ ಯಾವುದರಿಂದ ಬಂದಿತೆಂಬುದನ್ನು ನನಗೆ ತಿಳಿಸಲಿಲ್ಲ,” ಎಂದಳು.</verse>
				<verse number="16">ಇದಲ್ಲದೆ, ಅವಳು ಅವನನ್ನು ದಿನದಿನವೂ ಮಾತಿನಿಂದ ಪೀಡಿಸುತ್ತಿದ್ದುದರಿಂದ ಅವನಿಗೆ ಸಾಯುವುದೇ ಒಳ್ಳೆಯದೆನ್ನುವಷ್ಟು ಬೇಸರ ಆಯಿತು.</verse>
				<verse number="17">ಕೊನೆಗೆ ಅವನು, “ಕ್ಷೌರಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ಮಾತೃಗರ್ಭ ಬಿಟ್ಟಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾದವನು. ನನ್ನ ತಲೆಯನ್ನು ಕ್ಷೌರಮಾಡಿದರೆ ನನ್ನ ಶಕ್ತಿ ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿ ಹೇಳಿದನು.</verse>
				<verse number="18">ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಮುಖಂಡರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಇದೊಂದು ಸಾರಿ ಬನ್ನಿ; ಅವರು ನನಗೆ ತಮ್ಮ ಹೃದಯವನ್ನೆಲ್ಲಾ ಬಿಚ್ಚಿದ್ದಾರೆ,” ಎಂದು ಹೇಳಿ ಕರೆಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು.</verse>
				<verse number="19">ಆಕೆ ಸಂಸೋನನನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಅವನಿಗೆ ನಿದ್ರೆಹತ್ತಿದಾಗ ಒಬ್ಬ ಮನುಷ್ಯನಿಂದ ಅವನ ತಲೆಯ ಏಳು ಜಡೆಗಳನ್ನು ಬೋಳಿಸಿ ಅವನನ್ನು ದುರ್ಬಲಪಡಿಸಿದಳು.</verse>
				<verse number="20">ಅವನ ಶಕ್ತಿ ಇಂಗಿಹೋಯಿತು. ಆಗ ಅವಳು, “ಸಂಸೋನರೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಿದಳು. ಅವನು ಎಚ್ಚೆತ್ತು, “ಮುಂಚಿನಂತೆಯೇ ಈಗಲೂ ಕೊಸರಿಕೊಂಡು ಹೋಗುವೆನು,” ಎಂದುಕೊಂಡನು. ಆದರೆ ಸರ್ವೇಶ್ವರ ತನ್ನನ್ನು ಬಿಟ್ಟುಹೋಗಿ ಇದ್ದಾರೆಂಬುದು ಅವನಿಗೆ ತಿಳಿಯಲಿಲ್ಲ.</verse>
				<verse number="21">ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಾಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಬೀಸುವುದಕ್ಕೆ ಹಚ್ಚಿದರು.</verse>
				<verse number="22">ಅಷ್ಟರಲ್ಲಿ ಅವನ ತಲೆಗೂದಲುಗಳು ಬೆಳೆಯತೊಡಗಿದವು.</verse>
				<verse number="23">ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಬಲಿಯನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯರ ಮುಖಂಡರು ಕೂಡಿಬಂದರು.</verse>
				<verse number="24">ಜನರು ಸಂಸೋನನನ್ನು ನೋಡಿ: ‘ನಮ್ಮ ದೇಶವನ್ನು ಹಾಳುಮಾಡಿದ, ನಮ್ಮಲ್ಲಿ ಅನೇಕರನ್ನು ಕೊಂದುಹಾಕಿದ, ಈ ಶತ್ರುವನ್ನು ನಮ್ಮ ದೇವರೇ ನಮ್ಮ ಕೈಗೊಪ್ಪಿಸಿದ,’ ಎಂದು ಗಾನಮಾಡಿದರು.</verse>
				<verse number="25">ಅವರು ಆನಂದಲಹರಿಯಲ್ಲಿದ್ದಾಗ, “ನಮ್ಮ ಮನೋರಂಜನೆಗಾಗಿ ಸಂಸೋನನನ್ನು ಕರೆದುಕೊಂಡು ಬನ್ನಿ,” ಎಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ಅವರೆಲ್ಲರ ಮನರಂಜಿಸಬೇಕಾಯಿತು.</verse>
				<verse number="26">ಆಗ ಸಂಸೋನನು ತನ್ನನ್ನು ಕೈಹಿಡಿದು ನಡೆಸುತ್ತಿದ್ದ ಹುಡುಗನಿಗೆ, “ನನ್ನ ಕೈಗಳನ್ನು ಬಿಡು; ನಾನು ಕೈಯಾಡಿಸಿ ಮನೆಗೆ ಆಧಾರವಾಗಿರುವ ಸ್ತಂಭಗಳನ್ನು ಹುಡುಕಿ ಅವುಗಳಿಗೆ ಸ್ವಲ್ಪ ಒರಗಿಕೊಳ್ಳುತ್ತೇನೆ,” ಎಂದನು.</verse>
				<verse number="27">ಆ ಮನೆ ಸ್ತ್ರೀಪುರುಷರಿಂದ ಕಿಕ್ಕಿರಿದಿತ್ತು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು. ಸಂಸೋನನು ತೋರಿಸುತ್ತಿದ್ದ ಮನೋರಂಜನಾ ಕಾರ್ಯಗಳನ್ನು ನೋಡುವುದಕ್ಕಾಗಿ ಬಂದವರಲ್ಲಿ ಸುಮಾರು ಮೂರು ಸಾವಿರ ಮಂದಿ ಸ್ತ್ರೀಪುರುಷರು ಮಾಳಿಗೆಯ ಮೇಲಿದ್ದರು.</verse>
				<verse number="28">ಆಗ ಸಂಸೋನನು ಸರ್ವೇಶ್ವರನಿಗೆ, “ಪ್ರಭು ಸರ್ವೇಶ್ವರಾ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡು ಕಣ್ಣುಗಳಲ್ಲಿ ಒಂದಕ್ಕಾದರು ನಾನು ಅವರಿಗೆ ಮುಯ್ಯಿ ತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸಿರಿ,” ಎಂದು ಮೊರೆಯಿಟ್ಟನು.</verse>
				<verse number="29">ಆ ಮನೆಯ ಆಧಾರ ಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ ಇನ್ನೊಂದನ್ನು ಎಡಗೈಯಿಂದಲೂ ಹಿಡಿದು ಅವುಗಳನ್ನು ಒತ್ತಿ,</verse>
				<verse number="30">“ನಾನು ಫಿಲಿಷ್ಟಿಯರ ಸಂಗಡ ಸಾಯುವೆನು,” ಎಂದು ಹೇಳಿ ಬಲವಾಗಿ ಬಾಗಿಕೊಂಡನು. ಆ ಮನೆಯು ಅಧಿಪತಿಗಳ ಮೇಲೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದು ಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಿತ್ತು.</verse>
				<verse number="31">ಅವನ ಬಂಧುಗಳೂ ತಂದೆಯ ಮನೆಯವರೆಲ್ಲರೂ ಬಂದು ಅವನ ಶವವನ್ನು ಎತ್ತಿಕೊಂಡು ಹೋಗಿ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿದ್ದ ಅವನ ತಂದೆ ಮಾನೋಹನ ಸಮಾಧಿಯಲ್ಲಿ ಸ್ಥಾಪನೆಮಾಡಿದರು. ಅವನು ಇಸ್ರಯೇಲರನ್ನು ಇಪ್ಪತ್ತು ವರ್ಷ ಪಾಲಿಸಿದನು</verse>
			</chapter>
			<chapter number="17">
				<verse number="1">ಎಫ್ರಯಿಮ್ ಬೆಟ್ಟದ ಪ್ರಾಂತ್ಯದಲ್ಲಿ ಮೀಕ ಎಂಬ ಒಬ್ಬ ಮನುಷ್ಯನು ಇದ್ದನು.</verse>
				<verse number="2">ಅವನು ಒಂದು ದಿನ ತನ್ನ ತಾಯಿಗೆ, “ಅಮ್ಮಾ, ಕಳವಾಗಿದ್ದ ನಿನ್ನ ಸಾವಿರದ ನೂರು ಬೆಳ್ಳಿ ನಾಣ್ಯಗಳಿಗಾಗಿ ನೀನು ನನಗೆ ಕೇಳಿಸುವಂತೆ ಶಪಿಸಿದೆಯಲ್ಲವೆ? ಇಗೋ, ಆ ನಾಣ್ಯಗಳು ನನ್ನ ಹತ್ತಿರವೇ ಇವೆ; ನಾನೇ ತೆಗೆದುಕೊಂಡಿದ್ದೇನೆ,” ಎಂದು ಹೇಳಿದನು. ಆಕೆ, “ನನ್ನ ಮಗನೇ, ಸರ್ವೇಶ್ವರಸ್ವಾಮಿ ನಿನ್ನನ್ನು ಆಶೀರ್ವದಿಸಲಿ!” ಎಂದಳು.</verse>
				<verse number="3">ಅವನು ಆ ಸಾವಿರದ ನೂರು ಬೆಳ್ಳಿ ನಾಣ್ಯಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಟ್ಟನು.ಆಕೆ, “ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಸರ್ವೇಶ್ವರನಿಗೆ ಹರಕೆಮಾಡಿದ್ದೇನೆ. ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನಿನ್ನ ವಶಕ್ಕೆ ಕೊಡುತ್ತೇನೆ,” ಎಂದು ಹೇಳಿ</verse>
				<verse number="4">ಮಗನು ಹಿಂದಕ್ಕೆ ಕೊಟ್ಟ ನಾಣ್ಯಗಳಲ್ಲಿ ಇನ್ನೂರು ನಾಣ್ಯಗಳನ್ನು ತೆಗೆದು ಅಕ್ಕಸಾಲಿಗನಿಗೆ ಕೊಟ್ಟಳು. ಅವನು ಅವುಗಳಿಂದ ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನು ಮಾಡಿಕೊಟ್ಟನು. ಮೀಕನು ಅದನ್ನು ತನ್ನ ಮನೆಯಲ್ಲೇ ಇಟ್ಟುಕೊಂಡನು.</verse>
				<verse number="5">ಈ ಮೀಕನು ‘ಏಫೋದ’ನ್ನೂ ವಿಗ್ರಹಗಳನ್ನೂ ಮಾಡಿಸಿ ಅವುಗಳನ್ನು ತಾನು ಕಟ್ಟಿಸಿದ ದೇವಸ್ಥಾನದಲ್ಲಿಟ್ಟು ತನ್ನ ಕುಮಾರರಲ್ಲೊಬ್ಬನನ್ನು ಅರ್ಚಕ ಸೇವೆಗೆ ಪ್ರತಿಷ್ಠಿಸಿದನು.</verse>
				<verse number="6">ಆ ಕಾಲದಲ್ಲಿ ಇಸ್ರಯೇಲರಲ್ಲಿ ಅರಸನಿರಲಿಲ್ಲ. ಪ್ರತಿಯೊಬ್ಬನು ಮನಸ್ಸಿಗೆ ಬಂದಹಾಗೆ ನಡೆಯುತ್ತಾ ಇದ್ದನು.</verse>
				<verse number="7">ಯೆಹೂದದ ಬೆತ್ಲೆಹೇಮಿನವನೂ ಯೆಹೂದ ಕುಲದವನೂ ಆಗಿದ್ದ ಒಬ್ಬ ಯೌವನಸ್ಥನಾದ ಲೇವಿ,</verse>
				<verse number="8">ಜೀವನಕ್ಕೆ ಅನುಕೂಲವಾದ ಬೇರೆಲ್ಲಾದರು ವಾಸಿಸಬೇಕೆಂದು ಸ್ವಂತ ಊರನ್ನು ಬಿಟ್ಟು ಪ್ರಯಾಣಮಾಡುತ್ತಾ ಎಫ್ರಯಿಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದನು.</verse>
				<verse number="9">‘ನೀನು ಎಲ್ಲಿಂದ ಬಂದೆ?’ ಎಂದು ಮೀಕನು ಅವನನ್ನು ಕೇಳಿದನು. ಅವನು, “ನಾನು ಯೆಹೂದದ ಬೆತ್ಲೆಹೇಮಿನವನಾದ ಲೇವಿಯನು; ಜೀವನಕ್ಕೆ ಅನುಕೂಲವಾದ ಬೇರೆಲ್ಲಾದರು ವಾಸಿಸಬೇಕೆಂದು ಹೊರಟಿದ್ದೇನೆ” ಎಂದು ಉತ್ತರಕೊಟ್ಟನು.</verse>
				<verse number="10">ಮೀಕನು ಅವನಿಗೆ, “ನೀನು ನಮ್ಮಲ್ಲಿರು; ನಮಗೆ ತಂದೆಯೂ ಯಾಜಕನೂ ಆಗಿರು. ನಿನಗೆ ವರ್ಷಕ್ಕೆ ಹತ್ತು ಬೆಳ್ಳಿ ನಾಣ್ಯಗಳನ್ನು, ಉಡಿಗೆತೊಡಿಗೆಯನ್ನು ಹಾಗು ಆಹಾರವನ್ನು ಕೊಡುತ್ತೇನೆ,” ಎನ್ನಲು</verse>
				<verse number="11">ಆ ಲೇವಿ ಒಪ್ಪಿಕೊಂಡು ಅಲ್ಲೇ ವಾಸಮಾಡಿದನು. ಹೀಗೆ ಆ ಯೌವನಸ್ಥನು ಅವರ ಮಕ್ಕಳಲ್ಲಿ ಒಬ್ಬನಂತಾದನು.</verse>
				<verse number="12">ಮೀಕನು ಯೌವನಸ್ಥನಾದ ಆ ಲೇವಿಯನನ್ನು ಯಾಜಕ ಸೇವೆಗಾಗಿ ಪ್ರತಿಷ್ಠಿಸಿ ತನ್ನ ಮನೆಯಲ್ಲೇ ಇಟ್ಟುಕೊಂಡನು.</verse>
				<verse number="13">“ಒಬ್ಬ ಲೇವಿ ನನ್ನ ಮನೆಯಲ್ಲಿ ಯಾಜಕನಾಗಿರುವುದರಿಂದ ಸರ್ವೇಶ್ವರ ನನ್ನನ್ನು ಆಶೀರ್ವದಿಸುವರೆಂದು ಬಲ್ಲೆ,” ಎಂದುಕೊಂಡನು.</verse>
			</chapter>
			<chapter number="18">
				<verse number="1">ಆ ಕಾಲದಲ್ಲಿ ಇಸ್ರಯೇಲರಿಗೆ ಅರಸನಿರಲಿಲ್ಲ. ದಾನ್ ಕುಲದವರಿಗೆ ಆವರೆಗೂ ಇಸ್ರಯೇಲರಲ್ಲಿ ಆಸ್ತಿಪಾಸ್ತಿ ಸಿಕ್ಕದೆ ಇದ್ದುದರಿಂದ ಅವರು ತಮಗಾಗಿ ವಾಸಸ್ಥಳವನ್ನು ಹುಡುಕುತ್ತಿದ್ದರು.</verse>
				<verse number="2">ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಿಂದ ತಮ್ಮ ಕುಲದಲ್ಲಿ ಐದುಮಂದಿ ಪರಾಕ್ರಮಶಾಲಿಗಳಾದ ಗೂಢಚಾರರನ್ನು ಆರಿಸಿ ಅವರಿಗೆ, “ನೀವು ಹೋಗಿ (ಲಯಿಷ್) ದೇಶವನ್ನು ಸಂಚರಿಸಿ ನೋಡಿ ಬನ್ನಿ,” ಎಂದು ಆಜ್ಞಾಪಿಸಿ ಕಳುಹಿಸಿದನರು. ಇವರು ಪ್ರಯಾಣ ಮಾಡುತ್ತಾ ಎಫ್ರಯಿಮ್ ಬೆಟ್ಟದ ಸೀಮೆಯಲ್ಲಿ ಇದ್ದ ಮೀಕನ ಮನೆಗೆ ಬಂದು ಇಳಿದುಕೊಂಡರು.</verse>
				<verse number="3">ಇವರು ಮೀಕನ ಮನೆಯ ಹತ್ತಿರದಲ್ಲಿ ಆ ಯೌವನಸ್ಥನಾದ ಲೇವಿಯನು ಮಾತಾಡುವುದನ್ನು ಕೇಳಿ ಗುರುತು ಹಿಡಿದು ಅವನ ಬಳಿಗೆ ಹೋಗಿ, “ನಿನ್ನನ್ನು ಇಲ್ಲಿಗೆ ಕರೆತಂದವರಾರು? ಇಲ್ಲಿ ಏನು ಕೆಲಸ ಮಾಡುತ್ತಿರುವೆ? ಏನು ಸಂಬಳ ಸಿಕ್ಕುತ್ತಿದೆ?” ಎಂದು ಅವನನ್ನು ವಿಚಾರಿಸಿದರು. ಅವನು,</verse>
				<verse number="4">‘ಮೀಕನು ತನಗೆ ಇಂಥಿಂಥವುಗಳನ್ನು ಸಂಬಳವಾಗಿ ಕೊಡುತ್ತಾನೆಂದೂ ತಾನು ಅವನ ಯಾಜಕನಾಗಿದ್ದೇನೆಂದೂ ಹೇಳಿದನು.</verse>
				<verse number="5">ಆಗ ಅವರು, “ದಯವಿಟ್ಟು ನಮ್ಮ ಪ್ರಯಾಣ ಸಫಲ ಆಗುವುದೋ ಇಲ್ಲವೋ ಎಂಬುದನ್ನು ದೇವರ ಸನ್ನಿಧಿಯಲ್ಲಿ ವಿಚಾರಿಸು,” ಎಂದು ಬೇಡಿಕೊಂಡರು.</verse>
				<verse number="6">ಅವನು, “ಸಮಾಧಾನದಿಂದ ಹೋಗಿ ಸರ್ವೇಶ್ವರ ನಿಮ್ಮ ಪ್ರಯಾಣವನ್ನು ಆಶೀರ್ವದಿಸುವರು,” ಎಂದನು.</verse>
				<verse number="7">ಆ ಐದು ಮಂದಿ ಹೊರಟು ಲಯಿಷಿಗೆ ಬಂದರು. ಇಲ್ಲಿನ ಜನರು ನಿರ್ಭೀತರಾಗಿ ಚೀದೋನ್ಯರಂತೆ ಸುಖಸಮಾಧಾನಗಳಿಂದ ಜೀವಿಸುತ್ತಾರೆ; ಇವರನ್ನು ಅಡಗಿಸುವ ಅಧಿಕಾರಿಗಳು ದೇಶದಲ್ಲಿಲ್ಲ. ಇವರು ಚೀದೋನ್ಯರಿಗೆ ದೂರವಾಗಿದ್ದು ಯಾರೊಡನೆಯೂ ಬಳಕೆಯಿಲ್ಲದವರು ಎಂಬುದನ್ನು ತಿಳಿದುಕೊಂಡು ಹಿಂದಿರುಗಿ,</verse>
				<verse number="8">ಚೊರ್ಗಾ, ಎಷ್ಟಾವೋಲ್ ಎಂಬ ಊರುಗಳಲ್ಲಿ ಇರುವ ತಮ್ಮ ಬಂಧುಗಳ ಬಳಿಗೆ ಬಂದರು. ಆ ಬಂಧುಗಳು, “ನೀವು ಯಾವ ವರ್ತಮಾನ ತಂದಿದ್ದೀರಿ?” ಎಂದು ಅವರನ್ನು ಕೇಳಲು</verse>
				<verse number="9">ಅವರು, “ಏಳಿ, ಅವರಿಗೆ ವಿರುದ್ಧ ಯುದ್ಧಕ್ಕೆ ಹೋಗೋಣ. ನಾವು ಆ ದೇಶವನ್ನು ನೋಡಿದೆವು; ಅದು ಬಹು ಉತ್ತಮ ದೇಶ. ನೀವು ಸುಮ್ಮನೆ ಕುಳಿತುಕೊಳ್ಳುವುದೇಕೆ? ತಡಮಾಡದೆ ಹೊರಡಿ; ಆ ದೇಶವನ್ನು ನಮ್ಮದಾಗಿಸಿಕೊಳ್ಳೋಣ.</verse>
				<verse number="10">ನೀವು ಅಲ್ಲಿಗೆ ಹೋಗುವುದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ ಅವರ ದೇಶ ಬಹು ವಿಸ್ತಾರವಾಗಿದೆಯೆಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾರೆ. ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲೇ ಇಲ್ಲ,” ಎಂದರು.</verse>
				<verse number="11">ಆಗ ಚೊರ್ಗಾ, ಎಷ್ಟಾವೋಲ್ ಊರುಗಳಿಂದ ಆರುನೂರು ಮಂದಿ ದಾನ್ ಕುಲದವರು ಯುದ್ಧಸನ್ನದ್ಧರಾಗಿ ಹೊರಟರು.</verse>
				<verse number="12">ಗುಡ್ಡಹತ್ತಿ ಯೆಹೂದದ ಕಿರ್ಯತ್ಯಾರೀಮಿನ ಬಳಿಯಲ್ಲಿ ಇಳಿದುಕೊಂಡರು. ಆದುದರಿಂದ ಆ ಸ್ಥಳಕ್ಕೆ ಇಂದಿನವರೆಗೂ ‘ದಾನ್ಯರ ಪಾಳೆಯ’ ಎಂಬ ಹೆಸರಿದೆ; ಅದು ಕಿರ್ಯತ್ಯಾರೀಮಿನ ಪಶ್ಚಿಮದಲ್ಲಿದೆ.</verse>
				<verse number="13">ಅವರು ಅಲ್ಲಿಂದ ಮುಂದಕ್ಕೆ ಪ್ರಯಾಣ ಮಾಡಿ ಎಫ್ರಯಿಮ್ ಪರ್ವತಪ್ರದೇಶದಲ್ಲಿದ್ದ ಮೀಕನ ಮನೆಯ ಹತ್ತಿರಕ್ಕೆ ಬಂದರು.</verse>
				<verse number="14">ಲಯಿಷ್ ದೇಶವನ್ನು ಸಂಚರಿಸಿ ನೋಡುವುದಕ್ಕೆ ಹೋಗಿದ್ದ ಐದು ಮಂದಿ ತಮ್ಮ ಬಂಧುಗಳಿಗೆ, “ಈ ಗ್ರಾಮದಲ್ಲಿ ಒಂದು ‘ಏಫೋದು’, ದೇವತಾಪ್ರತಿಮೆಗಳು, ಕೆತ್ತನೆಯ ಮತ್ತು ಎರಕದ ವಿಗ್ರಹಗಳು ಇರುತ್ತವೆ ಎಂಬುದು ನಿಮಗೆ ಗೊತ್ತುಂಟೇ?</verse>
				<verse number="15">ಈ ವಿಷಯದಲ್ಲಿ ಏನು ಮಾಡಬೇಕೆಂಬುದನ್ನು ಆಲೋಚಿಸಿರಿ,” ಎಂದು ಹೇಳಿ ಅಲ್ಲಿಂದ ಮೀಕನ ಮನೆಯಲ್ಲಿದ್ದ ಆ ಯೌವನಸ್ಥನಾದ ಲೇವಿಯನ ಬಳಿಗೆ ಬಂದರು. ಅವನ ಯೋಗಕ್ಷೇಮವನ್ನು ವಿಚಾರಿಸತೊಡಗಿದರು.</verse>
				<verse number="16">ಇಷ್ಟರಲ್ಲಿ ಯುದ್ಧಸನ್ನದ್ಧರಾದ ಆರು ನೂರು ಮಂದಿ ದಾನ್ಯರು ಬಂದು ಬಾಗಿಲಲ್ಲಿ ನಿಂತರು.</verse>
				<verse number="17">ಯಾಜಕನೂ ಬಂದು ಇವರೊಡನೆ ಬಾಗಿಲಲ್ಲಿ ನಿಂತಿದ್ದಾಗ ಆ ಐದು ಮಂದಿ ಮನೆಯನ್ನು ಹೊಕ್ಕು ಕೆತ್ತನೆಯ ಮತ್ತು ಎರಕದ ವಿಗ್ರಹಗಳನ್ನೂ ‘ಏಫೋದ’ನ್ನೂ ದೇವತಾಪ್ರತಿಮೆಗಳನ್ನೂ ತೆಗೆದುಕೊಂಡರು.</verse>
				<verse number="18">ಅವುಗಳನ್ನು ಅವರು ಮೀಕನ ಮನೆಯನ್ನು ಹೊಕ್ಕು ತೆಗೆದುಕೊಂಡು ಬರುವಾಗ ಯಾಜಕನು ಕಂಡು ಅವರಿಗೆ, “ನೀವು ಮಾಡಿದ್ದೇನು?” ಎಂದನು.</verse>
				<verse number="19">ಅವರು ಅವನಿಗೆ, “ಬಾಯಿಮುಚ್ಚಿ ಸುಮ್ಮನಿರಿ, ನಮ್ಮ ಜೊತೆಯಲ್ಲಿ ಬಂದು ನಮಗೆ ತಂದೆಯೂ ಯಾಜಕನೂ ಆಗಿರು. ಒಂದೇ ಒಂದು ಮನೆಗೆ ಯಾಜಕನಾಗಿರುವುದು ಉತ್ತಮವೋ ಅಥವಾ ಇಸ್ರಯೇಲರ ಒಂದು ಕುಲಕ್ಕೂ ಗೋತ್ರಕ್ಕೂ ಯಾಜಕನಾಗಿರುವುದು ಉತ್ತಮವೋ?” ಎಂದರು.</verse>
				<verse number="20">ಯಾಜಕನು ಈ ಮಾತನ್ನು ಕೇಳಿ ಸಂತೋಷಪಟ್ಟು ಏಫೋದನ್ನೂ ದೇವತಾಪ್ರತಿಮೆಗಳನ್ನೂ ಕೆತ್ತನೆಯ ವಿಗ್ರಹವನ್ನೂ ತೆಗೆದುಕೊಂಡು ಅವರೊಡನೆ ಬಂದನು.</verse>
				<verse number="21">ತರುವಾಯ ಅವರು ತಮ್ಮ ಮಡದಿ ಮಕ್ಕಳನ್ನೂ ಕುರಿದನ ಮೊದಲಾದ ಸೊತ್ತನ್ನೂ ಮುಂದಾಗಿ ಕಳುಹಿಸಿ ತಾವೂ ಹಿಂದಿನಿಂದ ಹೊರಟರು.</verse>
				<verse number="22">ಅವರು ಮೀಕನ ಮನೆಗೆ ದೂರವಾದ ಮೇಲೆ ಮೀಕನೂ ಅವನ ನೆರೆಹೊರೆಯವರೆಲ್ಲರೂ ದಾನರನ್ನು ಹಿಂದಟ್ಟಿದರು.</verse>
				<verse number="23">ಅವರ ಸಮೀಪಕ್ಕೆ ಹೋಗಿ ಅವರನ್ನು ಕೂಗಿದರು. ದಾನ್ಯರು ಹಿಂದಿರುಗಿ ನೋಡಿ ಮೀಕನಿಗೆ, “ನಿನಗೇನಾಯಿತು? ಗುಂಪುಕೂಡಿಸಿಕೊಂಡು ಬಂದದ್ದೇಕೆ?” ಎಂದು ಕೇಳಿದರು.</verse>
				<verse number="24">ಅವನು, “ನೀವು ಯಾಜಕನನ್ನೂ ನಾನು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವೇ ನನ್ನನ್ನು ಕೇಳುವುದು ಹೇಗೆ?” ಎಂದನು.</verse>
				<verse number="25">ದಾನ್ಯರು ಅವನಿಗೆ, “ನಮ್ಮಲ್ಲಿ ಕೆಲವರು ಸಿಟ್ಟಿನವರು. ಅವರು ನಿಮ್ಮ ಮೇಲೆ ಬಿದ್ದರೆ ನೀನೂ ನಿನ್ನ ಮನೆಯವರೂ ಪ್ರಾಣನಷ್ಟಪಡುವಿರಿ. ಆದುದರಿಂದ ಬಾಯಿಮುಚ್ಚಿಕೊಂಡು ಹೋಗಿ,” ಎಂದು ಹೇಳಿ ಮುಂದೆ ನಡೆದರು.</verse>
				<verse number="26">ಅವರು ತನಗಿಂಥ ಬಲಿಷ್ಠರೆಂದು ಮೀಕನು ತಿಳಿದು ಹಿಂದಿರುಗಿ ಮನೆಗೆ ಹೋದನು.</verse>
				<verse number="27">ದಾನ್ಯರು ಮೀಕನು ಮಾಡಿಸಿದ್ದ ವಿಗ್ರಹಗಳನ್ನೂ ಅವನ ಯಾಜಕನನ್ನೂ ಅಪಹರಿಸಿಕೊಂಡು, ಲಯಿಷಿಗೆ ಹೋಗಿ, ಅಲ್ಲಿ ಸುಖದಿಂದಲೂ ನಿರ್ಭಯದಿಂದಲೂ ವಾಸವಾಗಿದ್ದ ಅಲ್ಲಿನ ಜನರ ಮೇಲೆ ಬಿದ್ದು ಅವರನ್ನು ಕತ್ತಿಯಿಂದ ಸಂಹರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟರು.</verse>
				<verse number="28">ಆ ಪಟ್ಟಣ ಚೀದೋನಿಗೆ ದೂರವಾಗಿದ್ದರಿಂದಲೂ ಸಮೀಪದಲ್ಲಿ ಪರಿಚಯಸ್ಥರಾರೂ ಇಲ್ಲದ್ದರಿಂದಲೂ ಅವರಿಗೆ ಸಹಾಯ ದೊರಕಲಿಲ್ಲ. ಬೇತ್ ರೆಹೋಬಿನ ತಗ್ಗಿನಲ್ಲಿದ್ದ ಈ ಪಟ್ಟಣವನ್ನು ದಾನ್ಯರು ತಿರುಗಿ ಕಟ್ಟಿಸಿ ಅದರಲ್ಲಿ ವಾಸಿಸಿದರು.</verse>
				<verse number="29">ಮುಂಚೆ ಲಯಿಷ್ ಎಂಬ ಹೆಸರಿದ್ದ ಆ ಪಟ್ಟಣಕ್ಕೆ ಈಗ ‘ದಾನ್’ ಎಂದು ಹೆಸರಿಟ್ಟರು. ದಾನ್ ಎಂಬುದು ಇವರ ಮೂಲ ಪುರುಷನೂ ಇಸ್ರಯೇಲನ ಮಗನೂ ಆದವನ ಹೆಸರು.</verse>
				<verse number="30">ಇದಲ್ಲದೆ ದಾನ್ಯರು ಆ ವಿಗ್ರಹವನ್ನು ತಮ್ಮ ಪಟ್ಟಣದಲ್ಲಿಟ್ಟರು. ಇಸ್ರಯೇಲರು ಸೆರೆಗೆ ಹೋಗುವವರೆಗೆ ಮೋಶೆಯ ಮೊಮ್ಮಗನೂ ಗೇರ್ಷೋಮನ ಮಗನೂ ಆದ ಯೆಹೋನಾತಾನನೂ ಅವನ ವಂಶದವರೂ ದಾನ್ಯರಿಗೆ ಯಾಜಕರಾಗಿದ್ದರು.</verse>
				<verse number="31">ಶಿಲೋವಿನಲ್ಲಿ ದೇವಸ್ಥಾನವಿದ್ದ ಕಾಲದಲ್ಲೆಲ್ಲಾ ದಾನ್ಯರಲ್ಲಿ ಮೀಕನು ಮಾಡಿಸಿದ ವಿಗ್ರಹವಿತ್ತು.</verse>
			</chapter>
			<chapter number="19">
				<verse number="1">ಆ ಕಾಲದಲ್ಲಿ ಇಸ್ರಯೇಲರಿಗೆ ಅರಸನಿರಲಿಲ್ಲ. ಎಫ್ರಯಿಮ್ ಪರ್ವತ ಪ್ರದೇಶದ ಒಂದು ಮೂಲೆಯಲ್ಲಿ ಯಾರೋ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೆತ್ಲೆಹೇಮಿನವಳಾದ ಒಬ್ಬ ಸ್ತ್ರೀ ಅವನಿಗೆ ಉಪಪತ್ನಿಯಾಗಿದ್ದಳು.</verse>
				<verse number="2">ಈಕೆ ಇವನನ್ನು ಬಿಟ್ಟು ವೇಶ್ಯೆಯಾಗಿ ಯೆಹೂದದ ಬೆತ್ಲೆಹೇಮಿನಲ್ಲಿದ್ದ ತನ್ನ ತೌರುಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳು ಇದ್ದಳು.</verse>
				<verse number="3">ಅನಂತರ ಆಕೆಯ ಗಂಡನಾದ ಆ ಲೇವಿಯನು ಆಕೆಯನ್ನು ಪ್ರೀತಿಯಿಂದ ಮಾತಾಡಿಸಿ ಮತ್ತೆ ಮನೆಗೆ ಕರೆದು ತರಬೇಕೆಂದು ಒಬ್ಬ ಸೇವಕನನ್ನೂ ಎರಡು ಕತ್ತೆಗಳನ್ನೂ ತೆಗೆದುಕೊಂಡು ಅಲ್ಲಿಗೆ ಹೋದನು. ಆಕೆ ಅವನನ್ನು ತನ್ನ ತೌರುಮನೆಯಲ್ಲಿ ಸೇರಿಸಿಕೊಂಡಳು. ಆಕೆಯ ತಂದೆಯೂ ಅವನನ್ನು ನೋಡಿ ಸಂತೋಷಪಟ್ಟನು.</verse>
				<verse number="4">ಆ ಸ್ತ್ರೀ ಹಾಗು ಅವನ ಮಾವ ಅವನನ್ನು ಮೂರು ದಿವಸ ಅಲ್ಲೇ ನಿಲ್ಲಿಸಿಕೊಂಡರು. ಅವನೂ ಅವನ ಸೇವಕನೂ ಅನ್ನಪಾನಗಳನ್ನು ತೆಗೆದುಕೊಳ್ಳುತ್ತಾ ಅಲ್ಲಿದ್ದರು.</verse>
				<verse number="5">ಅವರು ನಾಲ್ಕನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾದರು. ಆ ಸ್ತ್ರೀಯ ತಂದೆ ಅಳಿಯನಿಗೆ, “ಮೊದಲು ಸ್ವಲ್ಪ ಊಟಮಾಡಿ ಚೇತರಿಸಿಕೊ, ಆಮೇಲೆ ಹೋಗಬಹುದು,” ಎಂದು ಹೇಳಿದನು.</verse>
				<verse number="6">ಅವರಿಬ್ಬರೂ ಕುಳಿತು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆ ಪುನಃ ಅವನಿಗೆ, “ದಯವಿಟ್ಟು ಈ ರಾತ್ರಿ ಇಲ್ಲೇ ಇದ್ದು ಸಂತೋಷಪಡು,” ಎಂದು ಹೇಳಿದರೂ ಅವನು ಹೊರಡಲು ಸಿದ್ಧನಾದನು.</verse>
				<verse number="7">ಆದರೆ ಅವನ ಮಾವ ಬಹಳ ಬಲಾತ್ಕಾರ ಮಾಡಿದ್ದರಿಂದ ಆ ರಾತ್ರಿ ಅಲ್ಲೇ ತಂಗಿದರು.</verse>
				<verse number="8">ಅವನು ಐದನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆ, “ದಯವಿಟ್ಟು ಇಳಿಹೊತ್ತಿನವರೆಗೆ ಇಲ್ಲೇ ಇದ್ದು ವಿಶ್ರಮಿಸಿಕೋ,” ಎಂದು ಅವನನ್ನು ಬೇಡಿಕೊಳ್ಳಲು ಅವನು ಮತ್ತೆ ಊಟಕ್ಕೆ ನಿಂತನು.</verse>
				<verse number="9">ಅನಂತರ ಅವನು, ಅವನ ಉಪಪತ್ನಿ ಹಾಗು ಸೇವಕನು ಹೋಗುವುದಕ್ಕ ಸಿದ್ಧರಾಗಲು ಆ ಸ್ತ್ರೀಯ ತಂದೆ ಅಳಿಯನಿಗೆ, “ಹೊತ್ತುಮೀರಿತು; ಸಂಜೆ ಆಯಿತು. ದಯವಿಟ್ಟು ಈ ದಿನ ರಾತ್ರಿ ಇಲ್ಲೇ ಇರು; ನೋಡು, ಸಂಜೆಯಾಗಿಹೋಯಿತು. ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು,” ಎಂದು ಬೇಡಿಕೊಂಡನು.</verse>
				<verse number="10">ಆದರೆ ಆ ಮನುಷ್ಯ ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ ಉಪಪತ್ನಿಯನ್ನು ಕರೆದುಕೊಂಡು ಹೊರಟನು.</verse>
				<verse number="11">ಅವರು ಯೆಬೂಸಿಯರ ಊರಾದ ಜೆರುಸಲೇಮಿನ ಸಮೀಪಕ್ಕೆ ಬಂದಾಗ ಹೊತ್ತು ಮುಳುಗುವ ಕಾಲವಾದುದರಿಂದ ಸೇವಕನು ದಣಿಗೆ, “ದಯವಿಟ್ಟು ಬನ್ನಿ, ನಾವು ಯೆಬೂಸಿಯರ ಈ ಪಟ್ಟಣಕ್ಕೆ ಹೋಗಿ ಅಲ್ಲಿ ರಾತ್ರಿಯನ್ನು ಕಳೆಯೋಣ,” ಎಂದನು.</verse>
				<verse number="12">ಆಗ ಆ ದಣಿ, “ನಾವು ಇಸ್ರಯೇಲರಲ್ಲದ ಅನ್ಯರ ಪಟ್ಟಣದಲ್ಲಿ ತಂಗಬಾರದು; ಗಿಬೆಯಕ್ಕೆ ಹೋಗೋಣ,” ಎಂದನು.</verse>
				<verse number="13">ಅವನು ಮತ್ತೆ ತನ್ನ ಆಳಿಗೆ, “ನಾವು ಬೇಗನೆ ಹೋಗಿ ಮುಂದಿರುವ ಗಿಬೆಯದಲ್ಲಾಗಲಿ, ದಾಮದಲ್ಲಾಗಲಿ ತಂಗೋಣ ಬಾ,” ಎಂದನು.</verse>
				<verse number="14">ಹೀಗೆ ಅವರು ಮುಂದೆ ಸಾಗಿ ಬೆನ್ಯಾಮೀನ್ಯರ ಗಿಬೆಯ ಊರಿನ ಸಮೀಪಕ್ಕೆ ಬಂದಾಗ ಸೂರ್ಯನು ಮುಳುಗಿದ್ದನು.</verse>
				<verse number="15">ಆದುದರಿಂದ ಅವರು ತಂಗುವುದಕ್ಕಾಗಿ ಗಿಬೆಯಕ್ಕೆ ಹೋಗಿ, ಯಾರೂ ಮನೆಯಲ್ಲಿ ಸೇರಿಸಿಕೊಳ್ಳದೆ ಹೋದುದರಿಂದ ಸಂತೆ ಬೀದಿಯಲ್ಲೇ ಕುಳಿತುಕೊಂಡರು.</verse>
				<verse number="16">ಅಷ್ಟರಲ್ಲಿ ಎಫ್ರಯಿಮ್ ಪರ್ವತಪ್ರದೇಶಕ್ಕೆ ಸೇರಿದವನು ಹಾಗು ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸಿಸುವವನು ಆಗಿದ್ದ ಯಾರೋ ಒಬ್ಬ ಮುದುಕ ಸಾಯಂಕಾಲವಾದ್ದರಿಂದ ಕೆಲಸವನ್ನು ಬಿಟ್ಟು ಹೊಲದಿಂದ ಮನೆಗೆ ಬರುತ್ತಿದ್ದನು.</verse>
				<verse number="17">ಈ ಮುದುಕ, ಬೀದಿಯಲ್ಲಿ ಕುಳಿತಿದ್ದ ಆ ದಾರಿಗನನ್ನು ಕಂಡು, “ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತಿರುವೆ?” ಎಂದು ಕೇಳಿದನು.</verse>
				<verse number="18">ಅವನು ಆ ಮುದುಕನಿಗೆ, “ನಾವು ಯೆಹೂದದ ಬೆತ್ಲೆಹೇಮಿನಿಂದ ಎಫ್ರಯಿಮ್ ಪರ್ವತಪ್ರದೇಶದ ಒಂದು ಮೂಲೆಯಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಅಲ್ಲಿಂದ ಯೆಹೂದದ ಬೆತ್ಲೆಹೇಮಿಗೆ ಹೋಗಿದ್ದೆ; ಈಗ ಮರಳಿ ಸರ್ವೇಶ್ವರನ ಮಂದಿರಕ್ಕೆ ಹೋಗುತ್ತಿದ್ದೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಲಿಲ್ಲ.</verse>
				<verse number="19">ನಮ್ಮ ಕತ್ತೆಗಳಿಗೆ ಹುಲ್ಲೂ ಕಾಳೂ ಇವೆ. ನನಗೂ ನಿನ್ನ ಸೇವಕಿಗೂ ನಿನ್ನ ಸೇವಕನ ಸಂಗಡ ಬಂದಿರುವ ಈ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿಯೂ ದ್ರಾಕ್ಷಾರಸವೂ ಇರುತ್ತವೆ; ನಮಗೆ ಹೆಚ್ಚು ಏನೂ ಬೇಕಾಗಿರುವುದಿಲ್ಲ,” ಎಂದು ಹೇಳಿದನು.</verse>
				<verse number="20">ಆಗ ಆ ಮುದುಕ, “ನಿನಗೆ ಶುಭವಾಗಲಿ; ನಿನಗೆ ಏನಾದರೂ ಕಡಿಮೆಯಾದರೆ ಅದನ್ನು ನೋಡಿಕೊಳ್ಳುತ್ತೇನೆ;</verse>
				<verse number="21">ಈ ಬೀದಿಯಲ್ಲಿ ರಾತ್ರಿಯನ್ನು ಕಳೆಯಬೇಡ; ನನ್ನ ಮನೆಗೆ ಬಾ,” ಎಂದು ಹೇಳಿ ಅವನನ್ನು ಕರೆದುಕೊಂಡು ಹೋಗಿ ಅವನ ಕತ್ತೆಗಳಿಗೆ ಮೇವುಕೊಟ್ಟನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡು ಅಲ್ಲಿ ಅನ್ನಪಾನಗಳನ್ನು ತೆಗೆದುಕೊಂಡರು.</verse>
				<verse number="22">ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ನೀಚ ಜನರು ಬಂದು, ಆ ಮನೆಯನ್ನು ಸುತ್ತಿಕೊಂಡು, ಕದಗಳನ್ನು ಬಡಿದು, ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ತೆಗೆದುಕೊಂಡು ಬಾ; ಅವನೊಡನೆ ನಮಗೆ ಸಂಗಮವಾಗಬೇಕು,” ಎಂದು ಕೂಗಿದರು.</verse>
				<verse number="23">ಆಗ ಆ ಮುದುಕ ಹೊರಗೆ ಹೋಗಿ ಅವರಿಗೆ, “ಸಹೋದರರೇ, ಇಂಥ ದುಷ್ಟತನವನ್ನು ನಡೆಸಬೇಡಿ; ಅವನು ಆಶ್ರಯಕ್ಕಾಗಿ ನನ್ನ ಮನೆಗೆ ಬಂದಿದ್ದಾನೆ; ನೀವು ಇಂಥ ಹುಚ್ಚುತನ ಮಾಡಬೇಡಿ.</verse>
				<verse number="24">ಇನ್ನೂ ಮದುವೆಯಾಗದಂಥ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುತ್ತೇನೆ. ಅವರನ್ನು ಭಂಗಪಡಿಸಿರಿ; ನಿಮ್ಮ ಮನಸ್ಸಿಗೆ ಬಂದ ಹಾಗೆ ಮಾಡಿ; ಈ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿ,” ಎಂದನು.</verse>
				<verse number="25">ಆದರೆ ಅವರು ಆ ಮುದುಕನಿಗೆ ಕಿವಿಗೊಡಲೊಲ್ಲದೆ ಹೋದರು. ಆದುದರಿಂದ ಆ ಲೇವಿಯನು ತನ್ನ ಉಪಪತ್ನಿಯನ್ನು ಹೊರಗೆ ಅವರ ಮಧ್ಯಕ್ಕೆ ಕಳುಹಿಸಿಬಿಟ್ಟನು. ಅವರು ಆಕೆಯನ್ನು ರಾತ್ರಿಯೆಲ್ಲಾ ಬಹುಕ್ರೂರತನದಿಂದ ನಡಿಸಿ, ಕೋಳಿ ಕೂಗುವ ಹೊತ್ತಾಗಲು ಬಿಟ್ಟುಹೋದರು.</verse>
				<verse number="26">ಆ ಸ್ತ್ರೀ ಸೂರ್ಯೋದಯಕ್ಕೆ ಮುಂಚೆಯೇ ಬಂದು ತನ್ನ ಯಜಮಾನನು ತಂಗಿದ್ದ ಮನೆಯ ಬಾಗಿಲಲ್ಲಿ ಬಿದ್ದಳು; ಬೆಳಗಾದರೂ ಏಳಲೇ ಇಲ್ಲ.</verse>
				<verse number="27">ಆಕೆಯ ಪತಿ ಬೆಳಿಗ್ಗೆ ಎದ್ದು ಹೊರಡುವುದಕ್ಕೆ ಸಿದ್ಧನಾಗಿ ಬಾಗಿಲನ್ನು ತೆರೆದಾಗ ತನ್ನ ಉಪಪತ್ನಿ ಬಾಗಿಲ ಮುಂದೆ ಬಿದ್ದಿರುವುದನ್ನೂ ಆಕೆಯ ಕೈಗಳು ಹೊಸ್ತಲಿನ ಮೇಲಿರುವುದನ್ನೂ ಕಂಡನು.</verse>
				<verse number="28">ಅವನು, “ಏಳು, ಹೋಗೋಣ,” ಎಂದು ಆಕೆಯನ್ನು ಕರೆಯಲು ಪ್ರತ್ಯುತ್ತರವೇ ಬರಲಿಲ್ಲ. ಆಗ ಅವನು ಆಕೆಯ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು ಸ್ವಸ್ಥಳಕ್ಕೆ ಹೋದನು.</verse>
				<verse number="29">ಅವನು ಮನೆ ಸೇರಿದ ಮೇಲೆ ಒಂದು ಕತ್ತಿಯನ್ನು ತೆಗೆದುಕೊಂಡು ತನ್ನ ಉಪಪತ್ನಿಯ ಶವವನ್ನು ಎಲುಬುಗಳ ಸಹಿತವಾಗಿ ಹನ್ನೆರಡು ತುಂಡುಮಾಡಿ ಅವುಗಳನ್ನು ಇಸ್ರಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದನು.</verse>
				<verse number="30">ಅವುಗಳನ್ನು ಕಂಡವರೆಲ್ಲರು, “ಇಸ್ರಯೇಲರು ಈಜಿಪ್ಟನ್ನು ಬಿಟ್ಟು ಬಂದ ದಿವಸ ಮೊದಲ್ಗೊಂಡು ಈ ದಿವಸದವರೆಗೆ ಇಂಥ ಕೃತ್ಯ ನಡೆಯಲೂ ಇಲ್ಲ, ನಾವು ಅದನ್ನು ನೋಡಿಯೂ ಇಲ್ಲ. ಈ ಸಂಗತಿಯನ್ನು ಗಂಭೀರವಾಗಿ ವಿಚಾರಿಸತಕ್ಕದ್ದು,” ಎಂದುಕೊಂಡರು.</verse>
			</chapter>
			<chapter number="20">
				<verse number="1">ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಪ್ರಾಂತ್ಯಗಳಲ್ಲಿಯೂ ಗಿಲ್ಯಾದಿನಲ್ಲಿಯೂ ಇರುವ ಇಸ್ರಯೇಲರೆಲ್ಲರು ಏಕ ಮನಸ್ಸಿನಿಂದ ಹೊರಟು ಮಿಚ್ಫೆಗೆ ಬಂದು ಸರ್ವೇಶ್ವರನ ಸನ್ನಿಧಿಯಲ್ಲಿ ಸಭೆ ಸೇರಿದರು.</verse>
				<verse number="2">ಆ ದೇವಪ್ರಜಾಸಭೆಯಲ್ಲಿ ಎಲ್ಲಾ ಕುಲಾಧಿಪತಿಗಳೂ ಯುದ್ಧಸನ್ನದ್ಧರಾದ ನಾಲ್ಕು ಲಕ್ಷ ಕಾಲಾಳುಗಳೂ ಇದ್ದರು.</verse>
				<verse number="3">(ಇಸ್ರಯೇಲರು ಕೂಡಿಕೊಂಡು ಮಿಚ್ಫೆಗೆ ಬಂದಿದ್ದಾರೆಂಬ ವರ್ತಮಾನ ಬೆನ್ಯಾಮೀನ್ಯರಿಗೆ ಮುಟ್ಟಿತು.) ಇಸ್ರಯೇಲರು, “ಈ ದುಷ್ಟತನ ಹೇಗೆ ನಡೆಯಿತೆಂದು ತಿಳಿಸಿರಿ,” ಎಂದು ಕೇಳಿದರು.</verse>
				<verse number="4">ಹತಳಾದ ಸ್ತ್ರೀಯ ಗಂಡನಾದ ಆ ಲೇವಿಯನು, “ನಾನು ನನ್ನ ಉಪಪತ್ನಿಯ ಸಹಿತನಾಗಿ ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ಒಂದು ರಾತ್ರಿ ಇಳಿದುಕೊಂಡಿದ್ದೆ.</verse>
				<verse number="5">ಆ ಊರಿನ ಜನರು ಅದೇ ರಾತ್ರಿ ನಾನು ಇಳಿದುಕೊಂಡಿದ್ದ ಮನೆಯನ್ನು ಸುತ್ತಿಕೊಂಡು ನನ್ನನ್ನು ಕೊಲ್ಲಬೇಕೆಂದಿದ್ದರು; ಮತ್ತು ನನ್ನ ಉಪಪತ್ನಿಯ ಮೇಲೆ ಅತ್ಯಾಚಾರಮಾಡಿದರು. ಆಕೆ ಸತ್ತಳು.</verse>
				<verse number="6">ಅವರು ಇಸ್ರಯೇಲರಲ್ಲಿ ನಡೆಸಿದ ಇಂಥ ಕೆಟ್ಟ ಹಾಗು ಹುಚ್ಚುಗೆಲಸ ಎಲ್ಲರಿಗೂ ಗೊತ್ತಾಗಲೆಂದು ನಾನು ಆಕೆಯ ಶವವನ್ನು ತುಂಡುಮಾಡಿ ಇಸ್ರಯೇಲರ ಎಲ್ಲಾ ಪ್ರಾಂತ್ಯಗಳಿಗೆ ಕಳುಹಿಸಿದೆನು.</verse>
				<verse number="7">ಇಲ್ಲಿ ಕೂಡಿರುವ ಎಲ್ಲ ಇಸ್ರಯೇಲರೇ, ಈಗ ನಿಮ್ಮ ಆಲೋಚನೆಗಳನ್ನೂ ಅಭಿಪ್ರಾಯಗಳನ್ನೂ ಹೇಳಿ,” ಎಂದನು.</verse>
				<verse number="8">ಇದನ್ನು ಕೇಳಿ ಆ ಜನರು ಏಕಮನಸ್ಸಿನಿಂದ, “ನಮ್ಮಲ್ಲಿ ಯಾವನೂ ತನ್ನ ಗುಡಾರಕ್ಕೆ ಹೋಗಬಾರದು; ತನ್ನ ಮನೆಗೆ ಹಿಂದಿರುಗಕೂಡದು.</verse>
				<verse number="9">ನಾವು ಚೀಟುಹಾಕೋಣ; ಅದು ಬಿದ್ದ ಪ್ರಕಾರವೇ ಗಿಬೆಯದವರಿಗೆ ವಿರುದ್ಧ ಯುದ್ಧಕ್ಕೆ ಹೋಗೋಣ.</verse>
				<verse number="10">ಇಸ್ರಯೇಲರ ಕುಲಗಳಲ್ಲಿ ನೂರಕ್ಕೆ ಹತ್ತು, ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಈ ಪ್ರಕಾರವೇ ಜನರನ್ನು ಆರಿಸಿಕೊಂಡು ಅವರನ್ನು ಆಹಾರ ತರುವುದಕ್ಕಾಗಿ ಕಳುಹಿಸೋಣ. ಅವರು ಬಂದ ಮೇಲೆ ಬೆನ್ಯಾಮೀನ್ಯರಾದ ಗಿಬೆಯದವರು ಇಸ್ರಯೇಲರಲ್ಲಿ ನಡೆಸಿದ ದುಷ್ಕರ್ಮಕ್ಕಾಗಿ ಅವರನ್ನು ದಂಡಿಸೋಣ,” ಎಂದುಕೊಂಡರು.</verse>
				<verse number="11">ಹೀಗೆ ಅವರೆಲ್ಲರೂ ಏಕಮನಸ್ಸಿನಿಂದ ಆ ಪಟ್ಟಣಕ್ಕೆ ವಿರುದ್ಧವಾಗಿ ಕೂಡಿಕೊಂಡರು.</verse>
				<verse number="12">ಅವರು ಬೆನ್ಯಾಮೀನ್ಯರ ಸಮಸ್ತ ಕುಲಸ್ಥರ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ನಿಮ್ಮಲ್ಲಿ ನಡೆದ ಈ ದುಷ್ಕರ್ಮ ಎಂಥದು?</verse>
				<verse number="13">ಈಗ ಗಿಬೆಯ ಊರಲ್ಲಿರುವ ಆ ನೀಚರನ್ನು ನಮಗೆ ಒಪ್ಪಿಸಿರಿ; ನಾವು ಅವರನ್ನು ಕೊಂದು ಇಸ್ರಯೇಲರ ಮಧ್ಯೆಯಿಂದ ಇಂಥ ದುಷ್ಟತನವನ್ನು ತೆಗೆದುಹಾಕುತ್ತೇವೆ,” ಎಂದು ಹೇಳಿಸಿದರು.</verse>
				<verse number="14">ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳ ಮಾತಿಗೆ ಕಿವಿಗೊಡದೆ ತಮ್ಮ ಎಲ್ಲ ಊರುಗಳಿಂದ ಗಿಬೆಯಕ್ಕೆ ಬಂದು ಇಸ್ರಯೇಲರ ವಿರುದ್ಧ ಯುದ್ಧಕ್ಕೆ ನಿಂತರು.</verse>
				<verse number="15">ಆ ದಿವಸದಲ್ಲಿ ಆಯಾ ಊರುಗಳಿಂದ ಯುದ್ಧಸನ್ನದ್ಧರಾಗಿ ಕೂಡಿಬಂದ ಬೆನ್ಯಾಮೀನ್ಯರ ಸಂಖ್ಯೆ ಇಪ್ಪತ್ತಾರು ಸಾವಿರ. ಇವರಲ್ಲದೆ ಗಿಬೆಯದಲ್ಲಿಯೇ ಏಳುನೂರು ಮಂದಿ ಯುದ್ಧವೀರರಿದ್ದರು.</verse>
				<verse number="16">ಈ ಎಲ್ಲ ಜನರಲ್ಲಿ ಏಳುನೂರು ಮಂದಿ ಎಡಚರಾದ ಯುದ್ಧವೀರರಿದ್ದರು. ಅವರಲ್ಲಿ ಪ್ರತಿಯೊಬ್ಬನು ಕೂದಲ ಎಳೆಯಷ್ಟೂ ಗುರಿತಪ್ಪದ ಹಾಗೆ ಕವಣೆಯನ್ನು ಹೊಡೆಯುವುದರಲ್ಲಿ ನಿಪುಣನು;</verse>
				<verse number="17">ಬೆನ್ಯಾಮೀನ್ಯರಲ್ಲದ ಇಸ್ರಯೇಲರಲ್ಲಿ ನಾಲ್ಕು ಲಕ್ಷ ಯೋಧರು ಇದ್ದರು; ಇವರೆಲ್ಲರು ವೀರರೇ.</verse>
				<verse number="18">ಇಸ್ರಯೇಲರು ಬೇತೇಲಿಗೆ ಹೋಗಿ, ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಸರ್ವೇಶ್ವರನನ್ನು ಕೇಳಲು ಅವರು, “ಮೊದಲು ಯೆಹೂದಕುಲದವರು ಹೋಗಲಿ,” ಎಂದು ಹೇಳಿದರು.</verse>
				<verse number="19">ಇಸ್ರಯೇಲರು ಬೆಳಿಗ್ಗೆ ಹೊರಟುಹೋಗಿ ಗಿಬೆಯರ ಎದುರಿನಲ್ಲಿ ಪಾಳೆಯಮಾಡಿಕೊಂಡರು.</verse>
				<verse number="20">ಬೆನ್ಯಾಮೀನ್ಯರೊಡನೆ ಯುದ್ಧಮಾಡುವುದಕ್ಕೆ ಸಿದ್ಧರಾಗಿ ಗಿಬೆಯದ ಎದುರಿನಲ್ಲಿ ವ್ಯೂಹಕಟ್ಟಿ ನಿಂತರು.</verse>
				<verse number="21">ಆದಿನ ಬೆನ್ಯಾಮೀನ್ಯರು ಗಿಬೆಯದಿಂದ ಹೊರಗೆ ಬಂದು ಇಸ್ರಯೇಲರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ನೆಲಕ್ಕುರುಳಿಸಿದರು.</verse>
				<verse number="22">ಇಸ್ರಯೇಲರು ಪುನಃ ಧೈರ್ಯ ತಂದುಕೊಂಡು ಮೊದಲನೆಯ ದಿನ ವ್ಯೂಹಕಟ್ಟಿದ ಸ್ಥಳದಲ್ಲೇ ಮತ್ತೆ ವ್ಯೂಹಕಟ್ಟಿ ಯುದ್ಧಕ್ಕೆ ನಿಂತರು.</verse>
				<verse number="23">(ಇಸ್ರಯೇಲರು ಹೋಗಿ ಸರ್ವೇಶ್ವರನ ಮುಂದೆ ದುಃಖಿಸುತ್ತಾ, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೆ?” ಎಂದು ಕೇಳಲು ಅವರು, “ಹೋಗಿ ಯುದ್ಧಮಾಡಿ,” ಎಂದರು.</verse>
				<verse number="24">ಆದ್ದರಿಂದ ಅವರು ಎರಡನೆಯ ದಿನದಲ್ಲಿ ಯುದ್ಧಕ್ಕೆ ಸಿದ್ಧರಾಗಿ ಬೆನ್ಯಾಮೀನ್ಯರ ಸಮೀಪಕ್ಕೆ ಬಂದರು.)</verse>
				<verse number="25">ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯದಿಂದ ಹೊರಗೆ ಬಂದು ಇಸ್ರಯೇಲರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರನ್ನು ನೆಲಕ್ಕೆ ಬೀಳಿಸಿದರು.</verse>
				<verse number="26">ಆಗ ಎಲ್ಲ ಜನರು ಬೇತೇಲಿಗೆ ಹೋಗಿ ಅಲ್ಲಿ ಸರ್ವೇಶ್ವರನ ಮುಂದೆ ಅಳುತ್ತಾ ಕುಳಿತು, ಸಾಯಂಕಾಲದವರೆಗೆ ಉಪವಾಸಮಾಡಿದರು. ಇದಲ್ಲದೆ ಅವರು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದರು.</verse>
				<verse number="27">ಆ ಕಾಲದಲ್ಲಿ ಸರ್ವೇಶ್ಬರನ ಒಡಂಬಡಿಕೆಯ ಮಂಜೂಷವು ಆ ಊರೊಳಗೆ ಇತ್ತು.</verse>
				<verse number="28">ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಯಾಜಕ ಸೇವೆಮಾಡುತ್ತಿದ್ದನು. ಇಂತಿರಲು ಇಸ್ರಯೇಲರು, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಕ್ಕೆ ಹೋಗಬೇಕೋ ಬೇಡವೋ” ಎಂದು ಸರ್ವೇಶ್ವರನನ್ನು ಕೇಳಿದರು. ಸರ್ವೇಶ್ವರನು ಅವರಿಗೆ, “ಹೋಗಿ, ನಾಳೆ ಅವರನ್ನು ನಿಮ್ಮ ಕೈಗೆ ಒಪ್ಪಿಸುವೆನು,” ಎಂದರು.</verse>
				<verse number="29">ಆಗ ಇಸ್ರಯೇಲರು ಗಿಬೆಯದ ಸುತ್ತಲೂ ಕೆಲವರನ್ನು ಹೊಂಚುಹಾಕುವುದಕ್ಕೆ ಇರಿಸಿ,</verse>
				<verse number="30">ಉಳಿದವರು ಬೆನ್ಯಾಮೀನ್ಯರ ಸಂಗಡ ಕಾದಾಡುವುದಕ್ಕೋಸ್ಕರ ಮುಂಚಿನಂತೆ ಮೂರನೆಯ ದಿನ ಗಿಬೆಯದ ಸಮೀಪದಲ್ಲಿ ವ್ಯೂಹಕಟ್ಟಿದರು.</verse>
				<verse number="31">ಬೆನ್ಯಾಮೀನ್ಯರು ಇಸ್ರಯೇಲರೊಡನೆ ಯುದ್ಧ ಮಾಡುವುದಕ್ಕಾಗಿ ಪಟ್ಟಣವನ್ನು ಬಿಟ್ಟು ದೂರಕ್ಕೆ ಬಂದರು. ಅವರು ಮುಂಚಿನಂತೆ ಜನರನ್ನು ವಧಿಸುವುದಕ್ಕೆ ಪ್ರಾರಂಭಿಸಿ ಬೇತೇಲಿಗೂ ಬೈಲಿನಲ್ಲಿರುವ ಗಿಬೆಯಕ್ಕೂ ಹೋಗುವ ರಾಜಮಾರ್ಗಗಳಲ್ಲಿ ಸುಮಾರು ಮೂವತ್ತು ಮಂದಿಯನ್ನು ಹತಿಸಿದರು.</verse>
				<verse number="32">ಬೆನ್ಯಾಮೀನ್ಯರು, “ಅವರು ಮುಂಚಿನಂತೆ ಈಗಲೂ ಸೋತುಹೋಗುತ್ತಾರೆ” ಎಂದು ನೆನೆಸಿದರು. ಇಸ್ರಯೇಲರಾದರೋ, “ಅವರು ತಮ್ಮ ಪಟ್ಟಣಕ್ಕೆ ದೂರವಾಗುವಂತೆ ನಾವು ಸ್ವಲ್ಪ ದೂರ ಓಡಿಹೋಗೋಣ,” ಎಂದು ಮಾತನಾಡಿಕೊಂಡು</verse>
				<verse number="33">ತಾವು ಮೊದಲು ನಿಂತ ಸ್ಥಳದಿಂದ ಓಡತೊಡಗಿದರು. ಬಾಳ್ ತಾಮಾರಿಗೆ ಮುಟ್ಟಿದ ಕೂಡಲೆ ಅಲ್ಲಿ ನಿಂತು ಮತ್ತೆ ಯುದ್ಧವನ್ನು ಪ್ರಾರಂಭಿಸಿದರು. ಅಷ್ಟರಲ್ಲಿ ಹೊಂಚುಹಾಕುತ್ತಿದ್ದವರು ತಾವು ಅಡಗಿಕೊಂಡಿದ್ದ ಗಿಬೆಯದ ಮೈದಾನಿನಿಂದ ಎದ್ದು ಪಟ್ಟಣದ ಮುಂದೆ ಬಂದರು;</verse>
				<verse number="34">ಅವರ ಸಂಖ್ಯೆ ಸುಮಾರು ಹತ್ತು ಸಾವಿರ ಮಂದಿ ಯುದ್ಧವೀರರು. ಯುದ್ಧ ಬಹಳ ಘೋರವಾಯಿತು. ತಮಗೆ ಅಪಾಯ ಒದಗಿಬಂದಿದೆ ಎಂಬುದು ಬೆನ್ಯಾಮೀನ್ಯರಿಗೆ ಇನ್ನೂ ಗೊತ್ತಾಗಲಿಲ್ಲ.</verse>
				<verse number="35">ಸರ್ವೇಶ್ವರ ಇಸ್ರಯೇಲರಿಗೆ ಜಯಕೊಟ್ಟದ್ದರಿಂದ ಅವರು ಆ ದಿನದಲ್ಲಿ ಇಪ್ಪತ್ತೈದು ಸಾವಿರದ ನೂರು ಮಂದಿ ಬೆನ್ಯಾಮೀನ್ಯ ಯೋಧರನ್ನು ಕೊಂದುಹಾಕಿದರು.</verse>
				<verse number="36">ತಾವು ಸೋತುಹೋದೆವೆಂಬುದು ಬೆನ್ಯಾಮೀನ್ಯರಿಗೆ ಆಗ ತಿಳಿಯಿತು. (ಇಸ್ರಯೇಲರಿಗೆ ತಾವು ಗಿಬೆಯದ ಸಮೀಪದಲ್ಲಿ ಹೊಂಚುಹಾಕುವುದಕ್ಕಾಗಿ ಇಟ್ಟ ಜನರಲ್ಲಿ ಭರವಸೆಯಿತ್ತು. ಆದುದರಿಂದ ತಮ್ಮ ಸ್ಥಳವನ್ನು ಬಿಟ್ಟು ಬೆನ್ಯಾಮೀನ್ಯರ ಮುಂದೆ ಓಡಿಹೋದರು.</verse>
				<verse number="37">ಅಷ್ಟರಲ್ಲಿ ಅಡಗಿಕೊಂಡಿದ್ದವರು ಎದ್ದು ಗಿಬೆಯಕ್ಕೆ ಶೀಘ್ರವಾಗಿ ಹೋಗಿ ಅದರೊಳಗಿದ್ದ ಎಲ್ಲರನ್ನು ಕತ್ತಿಯಿಂದ ಸಂಹರಿಸಿದರು.</verse>
				<verse number="38">ಅಡಗಿದ್ದವರು ಊರಿಗೆ ಬೆಂಕಿಹೊತ್ತಿಸಿ ಹೊಗೆ ಏರಿಹೋಗುವಂತೆ ಮಾಡಿದ ಮೇಲೆ ಓಡಿಹೋಗುತ್ತಿದ್ದವರು ತಿರುಗಿಕೊಂಡು ಯುದ್ಧಕ್ಕೆ ನಿಲ್ಲಬೇಕೆಂದು ಹೊಂಚುಗಾರರೂ ಉಳಿದ ಇಸ್ರಯೇಲರೂ ತಮ್ಮ ತಮ್ಮೊಳಗೆ ಗೊತ್ತುಮಾಡಿದ್ದರು.</verse>
				<verse number="39">ಬೆನ್ಯಾಮೀನ್ಯರಾದರೋ, ಇಸ್ರಯೇಲರು ಮುಂಚಿನಂತೆ ನಮ್ಮ ಮುಂದೆ ಸೋತುಹೋದರೆಂದು ನೆನೆಸಿ ಅವರನ್ನು ಸಂಹರಿಸಲು ಪ್ರಾರಂಭಿಸಿ ಸುಮಾರು ಮೂವತ್ತು ಮಂದಿಯನ್ನು ಕೊಂದುಹಾಕಿದರು.</verse>
				<verse number="40">ಆದರೆ ಪಟ್ಟಣದಿಂದ ಹೊಗೆಯೆದ್ದು ಸ್ತಂಭದೋಪಾದಿಯಲ್ಲಿ ಕಾಣಿಸಲು ಇಸ್ರಯೇಲರು ತಿರುಗಿ ನಿಂತರು.</verse>
				<verse number="41">ಬೆನ್ಯಾಮೀನ್ಯರು ಹಿಂದಿರುಗಿ ನೋಡಿ ತಮ್ಮ ಪಟ್ಟಣ ಅಗ್ನಿಗೆ ಆಹುತಿ ಆದದ್ದನ್ನು ಕಂಡು ತಮಗೆ ಅಪಾಯ ಪ್ರಾಪ್ತ ಆಯಿತೆಂದು ಕಳವಳಗೊಂಡರು.</verse>
				<verse number="42">ಅವರು ಇಸ್ರಯೇಲರಿಗೆ ಬೆನ್ನುತೋರಿಸಿ ಅರಣ್ಯಮಾರ್ಗವಾಗಿ ಓಡಿಹೋದರು. ಆದರೆ ಸೈನಿಕರು ಅವರನ್ನು ಹಿಂದಟ್ಟಿದ್ದರಿಂದಲೂ ಪಟ್ಟಣಕ್ಕೆ ಬೆಂಕಿಹೊತ್ತಿಸಿದವರು ಬಂದುಬಿಟ್ಟದ್ದರಿಂದಲೂ ಅವರು ಉಭಯರ ಮಧ್ಯದಲ್ಲಿ ಸಿಕ್ಕಿ ಹಾಳಾದರು.</verse>
				<verse number="43">ಇಸ್ರಯೇಲರು ಅವರನ್ನು ಸುತ್ತಿಕೊಂಡು ಎಲ್ಲಿಯೂ ಓಡಗೊಡದೆ ಗಿಬೆಯ ಊರಿನ ಪೂರ್ವದಿಕ್ಕಿನಲ್ಲಿ ಇರುವ ಮೆನೂಹದಲ್ಲಿ ತುಳಿದುಬಿಟ್ಟರು.</verse>
				<verse number="44">ಈ ಪ್ರಕಾರ ಬೆನ್ಯಾಮೀನ್ಯರಲ್ಲಿ ಹದಿನೆಂಟು ಸಾವಿರ ಮಂದಿ ಯುದ್ಧವೀರರು ಹತರಾದರು.</verse>
				<verse number="45">ಇದಲ್ಲದೆ ಅವರು ಮರುಭೂಮಿಯಲ್ಲಿರುವ ರಿಮ್ಮೋನ್ ಗಿರಿಗೆ ಓಡಿಹೋಗುವಾಗ ಹಕ್ಕಲು ತೆನೆಗಳನ್ನೋ ಎಂಬಂತೆ ಐದು ಸಾವಿರ ಜನರನ್ನು ರಾಜಮಾರ್ಗಗಳಲ್ಲಿ ಕೊಂದುಹಾಕಿದರು. ಅಲ್ಲಿಂದ ಗಿದೋಮಿನವರೆಗೆ ಹಿಂದಟ್ಟಿ ಇನ್ನೂ ಎರಡು ಸಾವಿರ ಜನರನ್ನು ಹತಮಾಡಿದರು.</verse>
				<verse number="46">ಹೀಗೆ ಆ ದಿವಸ ಬೆನ್ಯಾಮೀನ್ಯರಲ್ಲಿ ಇಪ್ಪತ್ತೈದು ಸಾವಿರ ಯುದ್ಧಸನ್ನದ್ಧರಾದ ಯೋಧರು ಸಂಹೃತರಾದರು.)</verse>
				<verse number="47">ಆದರೆ ಆರುನೂರು ಮಂದಿ ಮರುಭೂಮಿ ಮಾರ್ಗವಾಗಿ ಓಡಿಹೋಗಿ ರಿಮ್ಮೋನ್ ಗಿರಿಯನ್ನು ಸೇರಿ ಅಲ್ಲಿ ನಾಲ್ಕು ತಿಂಗಳಿದ್ದರು.</verse>
				<verse number="48">ಇಸ್ರಯೇಲರು ತಿರುಗಿಕೊಂಡು ಬೆನ್ಯಾಮೀನ್ಯ ಪ್ರಾಂತ್ಯದ ಉಳಿದ ಗ್ರಾಮನಗರಗಳಿಗೆ ಹೋಗಿ ಅವುಗಳ ನಿವಾಸಿಗಳನ್ನೂ ದನಕುರಿಗಳನ್ನೂ ಸಿಕ್ಕಿದ್ದೆಲ್ಲವನ್ನೂ ಸಂಹರಿಸಿ ಎಲ್ಲ ಊರುಗಳಿಗೆ ಬೆಂಕಿ ಹೊತ್ತಿಸಿದರು.</verse>
			</chapter>
			<chapter number="21">
				<verse number="1">ಇಸ್ರಯೇಲರೆಲ್ಲರೂ ಮಿಚ್ಫೆಯಲ್ಲಿ ಇದ್ದಾಗ ತಾವು ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವುದಿಲ್ಲವೆಂದು ಆಣೆಯಿಟ್ಟಿದ್ದರು.</verse>
				<verse number="2">ಅವರು ಬೇತೇಲಿಗೆ ಬಂದು ಸಾಯಂಕಾಲದವರೆಗೆ ದೇವರ ಮುಂದೆ ಕುಳಿತು ಗಟ್ಟಿಯಾಗಿ ಅಳುತ್ತಾ</verse>
				<verse number="3">“ಸರ್ವೇಶ್ವರಾ, ಇಸ್ರಯೇಲರ ದೇವರೇ, ನಮ್ಮಲ್ಲಿ ಹೀಗೆ ಏಕಾಯಿತು? ಇಸ್ರಯೇಲರ ಒಂದು ಕುಲ ಹಾಳಾಗಿ ಹೋಯಿತಲ್ಲಾ!” ಎಂದು ಕೂಗಿಕೊಂಡರು.</verse>
				<verse number="4">ಮರುದಿವಸ ಅವರು ಬೆಳಿಗ್ಗೆ ಎದ್ದು ಬಲಿಪೀಠವನ್ನು ಕಟ್ಟಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದರು.</verse>
				<verse number="5">ಮತ್ತು ಸರ್ವೇಶ್ವರನ ಮುಂದೆ ಸಭೆ ನೆರೆದಾಗ ಅದಕ್ಕೆ ಬಾರದೆ ಇದ್ದಂಥ ಇಸ್ರಯೇಲರು ಯಾರಾರೆಂದು ವಿಚಾರಮಾಡಿದರು. ಏಕೆಂದರೆ ಮಿಚ್ಫೆಯಲ್ಲಿ, “ಸರ್ವೇಶ್ವರನ ಸನ್ನಿಧಿಗೆ ಬಾರದವರನ್ನು ಕೊಂದುಹಾಕುವೆವೆಂದು ಆಣೆಯಿಟ್ಟು ಅವರು ದೃಢಪ್ರಮಾಣ ಮಾಡಿದ್ದರು.</verse>
				<verse number="6">ಇಸ್ರಯೇಲರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಅವಸ್ಥೆಯನ್ನು ನೆನೆಸಿ ದುಃಖದಿಂದ, “ಅಯ್ಯೋ, ಇಸ್ರಯೇಲರಾದ ನಮ್ಮಲ್ಲಿ ಒಂದು ಕುಲ ಕಡಿಮೆಯಾಯಿತಲ್ಲಾ;</verse>
				<verse number="7">ಜೀವದಿಂದುಳಿದವರಿಗೆ ಹೆಂಡತಿಯರನ್ನು ದೊರಕಿಸಿಕೊಡುವುದು ಹೇಗೆ? ನಮ್ಮ ಹೆಣ್ಣುಗಳನ್ನು ಅವರಿಗೆ ಕೊಡುವುದಿಲ್ಲವೆಂದು ಸರ್ವೇಶ್ವರನ ಹೆಸರಿನಲ್ಲಿ ಆಣೆಯಿಟ್ಟೆವಲ್ಲಾ,” ಎಂದು ಗೋಳಾಡಿದರು.</verse>
				<verse number="8">ಮಿಚ್ಫೆಯಲ್ಲಿ ಸರ್ವೇಶ್ವರನ ಮುಂದೆ ಸಭೆ ಸೇರಿದ್ದಾಗ ಅದಕ್ಕೆ ಬಾರದಿದ್ದ ಇಸ್ರಯೇಲರು ಯಾರಾದರೂ ಇದ್ದಾರೋ ಎಂದು ವಿಚಾರಿಸುವಲ್ಲಿ, ಯಾಬೇಷ್ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು.</verse>
				<verse number="9">ಜನರನ್ನು ಲೆಕ್ಕಿಸಿದಾಗ ಯಾಬೇಷ್ ಗಿಲ್ಯಾದಿನಿಂದ ಯಾರೂ ಬರಲಿಲ್ಲವೆಂಬುದು ದೃಢವಾಯಿತು.</verse>
				<verse number="10">ಆಗ ಅವರು ತಮ್ಮಲ್ಲಿಂದ ಹನ್ನೆರಡು ಸಾವಿರಮಂದಿ ಪರಾಕ್ರಮಶಾಲಿಗಳನ್ನು ಆರಿಸಿಕೊಂಡು ಅವರಿಗೆ, “ನೀವು ಯಾಬೇಷ್ ಗಿಲ್ಯಾದಿಗೆ ಹೋಗಿ ಎಲ್ಲ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕಮಕ್ಕಳನ್ನೂ ಬಿಡದೆ ಸಂಹರಿಸಬೇಕು;</verse>
				<verse number="11">ಹೇಗೂ ಪುರುಷರೆಲ್ಲರನ್ನೂ ಮದುವೆಯಾದ ಸ್ತ್ರೀಯರನ್ನೂ ನಿರ್ಮೂಲಮಾಡುವುದು ನಿಮ್ಮ ಕೆಲಸ,” ಎಂದು ಆಜ್ಞಾಪಿಸಿ ಕಳುಹಿಸಿದರು.</verse>
				<verse number="12">ಯಾಬೇಷ್ ಗಿಲ್ಯಾದಿನಲ್ಲಿ ಇನ್ನೂ ಮದುವೆಯಾಗದಿದ್ದ ನಾನೂರು ಮಂದಿ ಯುವತಿಯರು ಇದ್ದರು. ಪಟ್ಟಣವನ್ನು ನಾಶಪಡಿಸುವುದಕ್ಕೆ ಹೋದವರು ಇವರನ್ನು ಉಳಿಸಿ ಕಾನಾನ್ ನಾಡಿನ ಶಿಲೋವಿನಲ್ಲಿದ್ದ ಪಾಳೆಯಕ್ಕೆ ತೆಗೆದುಕೊಂಡು ಬಂದರು.</verse>
				<verse number="13">ಅನಂತರ ಸರ್ವಸಭೆಯವರು ರಿಮ್ಮೋನ್ ಗಿರಿಯಲ್ಲಿದ್ದ ಬೆನ್ಯಾಮೀನ್ಯರ ಬಳಿಗೆ ದೂತರನ್ನು ಕಳುಹಿಸಿ ಅವರಲ್ಲಿ ಸಮಾಧಾನ ವಾಕ್ಯವನ್ನು ಪ್ರಕಟಿಸಲು ಅವರು ತಿರುಗಿಬಂದರು.</verse>
				<verse number="14">ಇಸ್ರಯೇಲರು ತಾವು ಯಾಬೇಷ್ ಗಿಲ್ಯಾದಿನಿಂದ ಉಳಿಸಿತಂದ ಕನ್ಯೆಯರನ್ನು ಅವರಿಗೆ ಮದುವೆ ಮಾಡಿಕೊಟ್ಟರು; ಅವರು ಸಾಯಲಿಲ್ಲ.</verse>
				<verse number="15">ಸರ್ವೇಶ್ವರ ನಮ್ಮಲ್ಲಿ ಒಂದು ಲೋಪವನ್ನುಂಟುಮಾಡಿದ್ದಾರೆಂದು ಇಸ್ರಯೇಲರು ಬೆನ್ಯಾಮೀನ್ಯರ ವಿಷಯದಲ್ಲಿ ದುಃಖಪಟ್ಟರು.</verse>
				<verse number="16">ಸಭೆಯ ಹಿರಿಯರು, “ಉಳಿದಿರುವ ಬೆನ್ಯಾಮೀನ್ಯರಿಗೆ ಹೆಂಡತಿಯರನ್ನು ದೊರಕಿಸುವುದು ಹೇಗೆ? ಅವರ ಸ್ತ್ರೀಯರೆಲ್ಲ ಸಂಹೃತರಾದರಲ್ಲಾ.</verse>
				<verse number="17">ಇಸ್ರಯೇಲರ ಒಂದು ಕುಲ ಸಂಪೂರ್ಣವಾಗಿ ಅಳಿದು ಹೋಗಬಾರದು. ತಪ್ಪಿಸಿಕೊಂಡು ಉಳಿದಿರುವ ಬೆನ್ಯಾಮೀನ್ಯರಿಗೆ ಬಾಧ್ಯಸ್ಥರು ಹುಟ್ಟಬೇಕಲ್ಲವೆ?</verse>
				<verse number="18">ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವ ಇಸ್ರಯೇಲರು ಶಾಪಗ್ರಸ್ತರಾಗಲಿ! ಎಂದು ಆಣೆಯಿಟ್ಟುಕೊಂಡಿದ್ದೇವೆ. ಇದರಿಂದ ನಾವು ಅವರಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಕ್ಕಾಗುವುದಿಲ್ಲ,”</verse>
				<verse number="19">ಎಂದು ಮಾತನಾಡಿಕೊಳ್ಳುತ್ತಿರುವಾಗ ಶಿಲೋವಿನಲ್ಲಿ ವರ್ಷ ವರ್ಷ ಸರ್ವೇಶ್ವರನ ಉತ್ಸವ ನಡೆಯುತ್ತದೆಂಬುದು ಅವರಿಗೆ ನೆನಪಿಗೆ ಬಂದಿತು. (ಶಿಲೋ ಎಂಬುದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆಮಿಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ ಲೇಬೋನದ ದಕ್ಷಿಣಕ್ಕೂ ಇರುತ್ತದೆ.)</verse>
				<verse number="20">ಆಗ ಅವರು ಬೆನ್ಯಾಮೀನ್ಯರನ್ನು ಕರೆದು ಅವರಿಗೆ, “ಇಗೋ, ನೀವು ದ್ರಾಕ್ಷೀತೋಟಗಳಲ್ಲಿ ಅಡಗಿಕೊಳ್ಳಿರಿ;</verse>
				<verse number="21">ಶಿಲೋವಿನ ಕನ್ಯೆಯರು ಹೊರಗೆ ಬಂದು ನಾಟ್ಯವಾಡುವಾಗ ನೀವು ತೋಟಗಳಿಂದ ಹೊರಗೆ ಬಂದು ಪ್ರತಿಯೊಬ್ಬನು ತನತನಗೆ ಶಿಲೋವಿನ ಕನ್ನಿಕೆಗಳಿಂದ ಒಬ್ಬಳನ್ನು ಹೆಂಡತಿಯಾಗಿ ತೆಗೆದುಕೊಂಡು ನಿಮ್ಮ ಪ್ರಾಂತ್ಯಕ್ಕೆ ಓಡಿಹೋಗಿರಿ.</verse>
				<verse number="22">ಅವರ ತಂದೆಗಳೂ ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರುತಂದರೆ ನಾವು ಅವರಿಗೆ, ‘ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿ; ಯುದ್ಧ ನಿಮಿತ್ತ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವುದು ನಮ್ಮಿಂದಾಗಲಿಲ್ಲ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದ್ದರಿಂದ ನೀವು ನಿರಪರಾಧಿಗಳು’ ಎಂದು ಹೇಳಿ ಸಮಾಧಾನಪಡಿಸುವೆವು” ಎಂದರು.</verse>
				<verse number="23">ಅದರಂತೆಯೇ ಬೆನ್ಯಾಮೀನ್ಯರು ನಾಟ್ಯವಾಡುವುದಕ್ಕಾಗಿ ಹೊರಗೆ ಬಂದಿದ್ದ ಕನ್ಯೆಯರಲ್ಲಿ ತಮ್ಮ ಸಂಖ್ಯೆಗೆ ಸರಿದೂಗುವಷ್ಟು ಮಂದಿಯನ್ನು ಹೆಂಡತಿಯರನ್ನಾಗಿ ಹಿಡಿದುಕೊಂಡು ತಮ್ಮ ಸ್ವಾಸ್ತ್ಯಭೂಮಿಗೆ ಹೋಗಿ ಅಲ್ಲಿ ಪಟ್ಟಣಗಳನ್ನು ಕಟ್ಟಿ ವಾಸಮಾಡಿದರು.</verse>
				<verse number="24">ಅನಂತರ ಇಸ್ರಯೇಲರು ತಮ್ಮ ತಮ್ಮ ಕುಲಗೋತ್ರಗಳಿಗೆ ಸೊತ್ತಾಗಿ ಸಿಕ್ಕಿದ ಪ್ರದೇಶಗಳಿಗೆ ಹಿಂದಿರುಗಿ ಹೋದರು.</verse>
				<verse number="25">ಆ ಕಾಲದಲ್ಲಿ ಇಸ್ರಯೇಲರಲ್ಲಿ ಅರಸನಿರಲಿಲ್ಲ; ಪ್ರತಿಯೊಬ್ಬನು ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು.</verse>
			</chapter>
		</book>
		<book number="8">
			<chapter number="1">
				<verse number="1">ಇಸ್ರಯೇಲ್ ನಾಡಿನಲ್ಲಿ ನ್ಯಾಯಸ್ಥಾಪಕರು ಆಳುತ್ತಿದ್ದಾಗ, ಒಮ್ಮೆ ಕಠಿಣವಾದ ಬರಗಾಲವು ತಲೆದೋರಿತು. ಈ ಕಾರಣ ಜುದೇಯ ಪ್ರಾಂತ್ಯದ ಬೆತ್ಲೆಹೇಮ್ ಎಂಬ ಊರಿನವನೊಬ್ಬನು ತನ್ನ ಪತ್ನಿ ಮತ್ತು ಪುತ್ರರಿಬ್ಬರನ್ನು ಕರೆದುಕೊಂಡು ಮೋವಾಬ್ ಎಂಬ ನಾಡಿಗೆ ವಲಸೆ ಹೋದನು.</verse>
				<verse number="2">ಅವನ ಹೆಸರು ಎಲಿಮೆಲೆಕ್; ಅವನ ಪತ್ನಿಯ ಹೆಸರು ನವೊಮಿ. ಮಹ್ಲೋನ್ ಮತ್ತು ಕಿಲ್ಯೋನ್ ಅವರ ಇಬ್ಬರು ಪುತ್ರರು. ಇವರು ಇಸ್ರಯೇಲ್ ವಂಶದ ಎಫ್ರಾತಕುಲಕ್ಕೆ ಸೇರಿದವರು, ಬೆತ್ಲೆಹೇಮಿನವರು.</verse>
				<verse number="3">ಇವರು ಮೋವಾಬ್ ನಾಡಿನಲ್ಲಿ ವಾಸಿಸುತ್ತಿದ್ದಾಗ ಎಲಿಮೆಲೆಕನು ಮರಣ ಹೊಂದಿದನು. ವಿಧವೆಯಾದ ನವೊಮಿ ಇಬ್ಬರು ಗಂಡುಮಕ್ಕಳೊಡನೆ ಅಲ್ಲೇ ಉಳಿದಳು.</verse>
				<verse number="4">ಹುಡುಗರು ಇಬ್ಬರೂ, ಮೋವಾಬ್ಯ ಹುಡುಗಿಯರನ್ನು ವಿವಾಹ ಆದರು. ಒಬ್ಬಳ ಹೆಸರು ಒರ್ಫಾ ಮತ್ತು ಇನ್ನೊಬ್ಬಳು ರೂತ್. ಅವರು ಅಲ್ಲಿ ಸುಮಾರು ಹತ್ತು ವರ್ಷಗಳ ಕಾಲ ವಾಸಮಾಡಿದ ನಂತರ,</verse>
				<verse number="5">ಮಹ್ಲೋನ್ ಮತ್ತು ಕಿಲ್ಯೋನ್ ಸಹ ತೀರಿಹೋದರು. ಹೀಗೆ ನವೊಮಿ ತನ್ನ ಪತಿಯನ್ನೂ ಇಬ್ಬರು ಪುತ್ರರನ್ನೂ ಕಳೆದುಕೊಂಡು ಒಬ್ಬಂಟಿಗಳು ಆದಳು.</verse>
				<verse number="6">ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ತನ್ನ ನಾಡಿನಲ್ಲಿ ಒಳ್ಳೆಯ ಮಳೆ ಬೆಳೆಗಳಾಗಿವೆ ಎಂಬ ಸಮಾಚಾರ ಮೋವಾಬ್ ನಾಡಿನಲ್ಲಿದ್ದ ನವೊಮಿಗೆ ತಿಳಿದು ಬಂದಿತು.</verse>
				<verse number="7">ಆದ್ದರಿಂದ ಅವಳು ಅಲ್ಲಿಗೆ ಹಿಂದಿರುಗಿ ಹೋಗಲು ಸಿದ್ಧತೆಮಾಡಿ ಜುದೇಯಕ್ಕೆ ಹೊರಟಳು. ಸೊಸೆಯರು ಅವಳ ಜೊತೆಯಲ್ಲೆ ಹೋದರು.</verse>
				<verse number="8">ಹೀಗೆ ಹೋಗುತ್ತಿರುವಾಗ ದಾರಿಯಲ್ಲಿ ನವೊಮಿ ಅವರಿಗೆ: “ನೀವು ಇಬ್ಬರೂ ನಿಮ್ಮ ತವರುಮನೆಗಳಿಗೆ ಹಿಂದಿರುಗಿರಿ. ನನಗೂ ಮರಣಹೊಂದಿದ ನನ್ನ ಮಕ್ಕಳಿಗೂ ನೀವು ಒಳಿತು ಮಾಡಿದಿರಿ.</verse>
				<verse number="9">ಸರ್ವೇಶ್ವರ ನಿಮಗೂ ಹಾಗೆಯೇ ಒಳಿತನ್ನು ಮಾಡಲಿ. ನೀವಿಬ್ಬರೂ ಪುನಃ ಮದುವೆಯಾಗಿ ಸುಖವಾಗಿರುವಂತೆ ಅನುಗ್ರಹಿಸಲಿ!” ಎಂದು ಹರಸಿ ಅವರನ್ನು ಬೀಳ್ಕೊಡುತ್ತಾ ಮುದ್ದಿಟ್ಟಳು.</verse>
				<verse number="10">ಆದರೆ ಅವರು, “ಇಲ್ಲಮ್ಮಾ, ನಿಮ್ಮನ್ನು ಬಿಟ್ಟು ಹೋಗಲಾರೆವು. ನಾವೂ ನಿಮ್ಮ ಜೊತೆಯಲ್ಲಿಯೇ ನಿಮ್ಮ ಸ್ವಜನರ ಬಳಿಗೆ ಬರುತ್ತೇವೆ,” ಎಂದು ಅಳಲಾರಂಭಿಸಿದರು.</verse>
				<verse number="11">ಆಗ ನವೊಮಿ, “ಮಕ್ಕಳೇ, ನೀವು ಹಿಂತಿರುಗುವುದು ಒಳ್ಳೆಯದು. ನನ್ನ ಸಂಗಡ ಏಕೆ ಬರಬೇಕೆಂದಿರುವಿರಿ? ನೀವು ಪುನಃ ಮದುವೆಯಾಗುವುದಕ್ಕೆ ನನಗೆ ಬೇರೆ ಮಕ್ಕಳಿರುವರೇ?</verse>
				<verse number="12">ಮಕ್ಕಳೇ, ನೀವು ಹಿಂದಿರುಗಿ ಹೋಗಿರಿ. ಪುನಃ ಮದುವೆಮಾಡಿಕೊಳ್ಳುವ ಪ್ರಾಯ ನನಗೆ ದಾಟಿಹೋಗಿದೆ. ಒಂದು ವೇಳೆ ಸಂತಾನಭಾಗ್ಯದ ನಿರೀಕ್ಷೆಯಿಂದ ಈ ಹೊತ್ತೇ ಮದುವೆಯಾಗಿ ಮಕ್ಕಳನ್ನು ಹಡೆದರೂ</verse>
				<verse number="13">ಅವರು ಬೆಳೆದು ದೊಡ್ಡವರಾಗುವವರೆಗೂ ಮದುವೆಯಾಗದೆ ಇರುವಿರೋ? ಬೇಡ, ಮಕ್ಕಳೇ, ಸರ್ವೇಶ್ವರ ನನ್ನ ಕೈ ಬಿಟ್ಟಿದ್ದಾರೆ, ನಿಮಗಾಗಿ ನಾನು ಬಹಳ ವಿಷಾದಿಸುತ್ತೇನೆ,” ಎಂದು ಸಮಾಧಾನ ಹೇಳಿದಳು.</verse>
				<verse number="14">ಅವರು ಇದನ್ನು ಕೇಳಿ ಇನ್ನೂ ಹೆಚ್ಚಾಗಿ ಅತ್ತರು. ಅನಂತರ ಒರ್ಫಾ ಅತ್ತೆಗೆ ಮುತ್ತಿಟ್ಟು ತನ್ನ ಮನೆಗೆ ಹಿಂದಿರುಗಿ ಹೋದಳು. ರೂತಳು ಮಾತ್ರ ಅತ್ತೆಯನ್ನು ಬಿಟ್ಟುಹೋಗಲಿಲ್ಲ.</verse>
				<verse number="15">ಆಗ ನವೊಮಿ ರೂತಳಿಗೆ: “ನೋಡು, ನಿನ್ನ ಓರಗಿತ್ತಿಯು ತನ್ನ ಜನಾಂಗದವರ ಬಳಿಗೂ ತನ್ನ ಕುಲದೇವರ ಬಳಿಗೂ ಹಿಂದಿರುಗಿ ಹೋಗಿದ್ದಾಳೆ. ನೀನೂ ಅವಳಂತೆಯೇ ಹೋಗಿಬಿಡು,” ಎಂದು ಒತ್ತಾಯಪಡಿಸಿದಳು.</verse>
				<verse number="16">ಅದಕ್ಕೆ ರೂತಳು: “ನಿಮ್ಮನ್ನು ಬಿಟ್ಟು ಹೋಗುವಂತೆ ಒತ್ತಾಯಪಡಿಸಬೇಡಿ. ನೀವು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುತ್ತೇನೆ. ನೀವು ಎಲ್ಲಿ ವಾಸಿಸಿದರೂ ನಾನು ಅಲ್ಲೇ ವಾಸಿಸುತ್ತೇನೆ.</verse>
				<verse number="17">ನಿಮ್ಮ ಜನರೇ ನನ್ನ ಜನರು; ನಿಮ್ಮ ದೇವರೇ ನನ್ನ ದೇವರು; ನೀವು ಸಾಯುವಲ್ಲೇ ನಾನು ಸಾಯುವೆನು; ಅಲ್ಲಿಯೇ ನನಗೆ ಸಮಾಧಿಯಾಗಲಿ. ಮರಣದಲ್ಲಿಯೂ ನಾನು ನಿಮ್ಮನ್ನು ಬಿಟ್ಟಿರಲಾರೆ. ಇಲ್ಲದಿದ್ದರೆ ಸರ್ವೇಶ್ವರ ನನಗೆ ತಕ್ಕ ದಂಡನೆಯನ್ನು ವಿಧಿಸಲಿ!” ಎಂದು ಬೇಡಿಕೊಂಡಳು.</verse>
				<verse number="18">ರೂತಳು ತನ್ನ ಸಂಗಡ ಬರಲು ನಿರ್ಧರಿಸಿದ್ದಾಳೆಂದು ತಿಳಿದು ನವೊಮಿ ಅವಳನ್ನು ಮತ್ತೆ ಒತ್ತಾಯಪಡಿಸಲಿಲ್ಲ.</verse>
				<verse number="19">ಹಾಗೆಯೇ ಪ್ರಯಾಣವನ್ನು ಮುಂದುವರೆಸಿ ಅವರಿಬ್ಬರೂ ಬೆತ್ಲೆಹೇಮನ್ನು ತಲುಪಿದರು. ಅವರು ಊರಿಗೆ ಹಿಂದಿರುಗಿ ಬಂದ ಸಂಗತಿ ಜನರಲ್ಲಿ ಕುತೂಹಲ ಮೂಡಿಸಿತು. ಊರಿನ ಹೆಂಗಸರು, “ಈಕೆ ನವೊಮಿಯಲ್ಲವೇ?” ಎಂದು ವಿಚಾರಿಸತೊಡಗಿದರು.</verse>
				<verse number="20">ಅದಕ್ಕೆ ಅವಳು, “ನನ್ನನ್ನು ‘ನವೊಮಿ’ ಎಂದು ಕರೆಯಬೇಡಿ; ‘ಮಾರಾ’ ಎಂದು ಕರೆಯಿರಿ. ಏಕೆಂದರೆ ಸರ್ವಶಕ್ತ ದೇವರು ನನ್ನನ್ನು ಬಹಳ ದುಃಖಪಡಿಸಿದ್ದಾರೆ.</verse>
				<verse number="21">ಸಿರಿವಂತಳಾಗಿ ಇಲ್ಲಿಂದ ಹೋದೆ. ಗತಿಹೀನಳನ್ನಾಗಿ ಸರ್ವೇಶ್ವರ ನನ್ನನ್ನು ಹಿಂದಕ್ಕೆ ಕರೆತಂದಿದ್ದಾರೆ. ಹೀಗೆ ಸರ್ವಶಕ್ತ ದೇವರು ನನಗೆ ವಿರೋಧವಾಗಿ ನನ್ನನ್ನು ಬಾಧಿಸಿರುವಾಗ ನೀವು ನನ್ನನ್ನು ನವೊಮಿ ಎಂದು ಕರೆಯುವುದು ಸರಿಯೇ?’ ಎಂದು ಉತ್ತರಕೊಟ್ಟಳು.</verse>
				<verse number="22">ಹೀಗೆ ನವೊಮಿ ತನ್ನ ಮೋವಾಬ್ಯ ಸೊಸೆಯಾದ ರೂತಳ ಸಂಗಡ ಬೆತ್ಲೆಹೇಮಿಗೆ ಬಂದಳು. ಆಗ ಜವೆಗೋದಿಯ ಸುಗ್ಗಿ ಪ್ರಾರಂಭವಾಗಿತ್ತು</verse>
			</chapter>
			<chapter number="2">
				<verse number="1">ನವೊಮಿಗೆ ಬೋವಜ ಎಂಬ ನೆಂಟನು ಇದ್ದನು. ಅವನು ಐಶ್ವರ್ಯವಂತ ಮತ್ತು ಒಬ್ಬ ಗಣ್ಯ ವ್ಯಕ್ತಿ; ನವೊಮಿಯ ಪತಿ ಎಲಿಮೆಲೆಕನ ಕುಟುಂಬಕ್ಕೆ ಸೇರಿದವನು.</verse>
				<verse number="2">ರೂತಳು ನವೊಮಿಗೆ: “ನಾನು ಹೊಲಗಳಿಗೆ ಹೋಗಿ ತೆನೆಗಳನ್ನು ಆಯ್ದುಕೊಂಡು ಬರಲೇ? ಇದಕ್ಕೆ ಯಾರಾದರು ನನಗೆ ನೆರವಾಗಬಹುದು,” ಎಂದು ಕೇಳಿದಳು. ನವೊಮಿ, “ಹೋಗಿ ಬಾ, ಮಗಳೇ,” ಎಂದು ಅಪ್ಪಣೆಕೊಟ್ಟಳು.</verse>
				<verse number="3">ರೂತಳು ಕೊಯ್ಯುವವರ ಹಿಂದೆ ಹೋಗುತ್ತಾ ಅಲ್ಲಲ್ಲಿ ಬಿದ್ದ ತೆನೆಗಳನ್ನು ಆಯ್ದುಕೊಳ್ಳುತ್ತಿದ್ದಳು. ಸುದೈವದಿಂದ ಅದು ಎಲಿಮೆಲೆಕನ ನೆಂಟನಾದ ಬೋವಜನ ಹೊಲವಾಗಿತ್ತು.</verse>
				<verse number="4">ಸ್ವಲ್ಪ ಹೊತ್ತಾದ ಮೇಲೆ, ಇದ್ದಕ್ಕಿದ್ದ ಹಾಗೆ ಬೋವಜನು ಬೆತ್ಲೆಹೇಮಿನಿಂದ ಅಲ್ಲಿಗೆ ಬಂದನು. ಅವನು, “ಸರ್ವೇಶ್ವರಸ್ವಾಮಿ ನಿಮ್ಮೊಡನೆ ಇರಲಿ!” ಎಂದು ಕೆಲಸದಾಳುಗಳನ್ನು ವಂದಿಸಿದನು. ಅದಕ್ಕೆ ಅವರು, “ಸರ್ವೇಶ್ವರ ನಿಮ್ಮನ್ನೂ ಹರಸಲಿ!” ಎಂದು ಪ್ರತಿವಂದನೆ ಮಾಡಿದರು.</verse>
				<verse number="5">ಬೋವಜನು ಮೇಸ್ತ್ರಿಯನ್ನು ಕರೆದು, “ಇವಳು ಯಾವ ಮನೆಯ ಹೆಣ್ಣು?” ಎಂದು ವಿಚಾರಿಸಿದನು.</verse>
				<verse number="6">ಅದಕ್ಕೆ ಆ ಮೇಸ್ತ್ರಿ, “ಇವಳು ಮೋವಾಬ್ಯಳು, ನವೊಮಿಯ ಸಂಗಡ ಮೋವಾಬ್ ನಾಡಿನಿಂದ ಹಿಂದಿರುಗಿ ಬಂದವಳು.</verse>
				<verse number="7">ಕೊಯ್ಯುವವರ ಹಿಂದೆ ಹೋಗಿ ಸಿವುಡುಗಳ ಮಧ್ಯೆ ಹಕ್ಕಲಾಯ್ದುಕೊಳ್ಳುವುದಕ್ಕೆ ಅಪ್ಪಣೆಯಾಗಬೇಕೆಂದು ಕೇಳಿಕೊಂಡಳು. ಬೆಳಿಗ್ಗೆ ಬಂದವಳು ಇನ್ನೂ ಇಲ್ಲೇ ಇದ್ದಾಳೆ. ಸದ್ಯಕ್ಕೆ ನೆರಳಿನಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾಳೆ,” ಎಂದು ಉತ್ತರಕೊಟ್ಟನು.</verse>
				<verse number="8">ತದನಂತರ ಬೋವಜನು ರೂತಳಿಗೆ, “ನೋಡಮ್ಮಾ, ಈ ಹೊಲವನ್ನು ಬಿಟ್ಟು ಮತ್ತೆ ಎಲ್ಲಿಯೂ ತೆನೆ ಆಯಲು ಹೋಗಬೇಕಾಗಿಲ್ಲ, ನನ್ನ ಹೆಣ್ಣಾಳುಗಳ ಜೊತೆಯಲ್ಲಿಯೇ ಇರು.</verse>
				<verse number="9">ಅವರು ಎಲ್ಲಿ ಪೈರು ಕೊಯ್ಯುತ್ತಾರೋ ಅವರ ಹಿಂದೆ ಹೋಗಿ ತೆನೆಗಳನ್ನು ಆರಿಸಿಕೊ. ನಿನಗೆ ಯಾರೂ ತೊಂದರೆ ಕೊಡಬಾರದೆಂದು ನನ್ನ ಆಳುಗಳಿಗೆ ಆಜ್ಞಾಪಿಸಿದ್ದೇನೆ. ನಿನಗೆ ಬಾಯಾರಿಕೆಯಾದರೆ ಹೋಗಿ ನನ್ನ ಆಳುಗಳು ತುಂಬಿಸಿರುವ ನೀರಿನ ಬಾನೆಗಳಿಂದ ಕುಡಿ,” ಎಂದನು.</verse>
				<verse number="10">ಆಗ ರೂತಳು ಅವನಿಗೆ ಸಾಷ್ಟಾಂಗವೆರಗಿ ನಮಸ್ಕರಿಸಿ, “ಒಡೆಯಾ, ನನ್ನ ಮೇಲೆ ಏಕೆ ಇಷ್ಟು ಕನಿಕರ? ಪರದೇಶಿಯಾದ ನನಗೆ ತಾವಿಷ್ಟು ದಯೆತೋರಿಸುವುದೇಕೆ?” ಎಂದಳು.</verse>
				<verse number="11">ಅದಕ್ಕೆ ಬೋವಜನು, “ನಿನ್ನ ಪತಿ ತೀರಿಹೋದಂದಿನಿಂದ ನೀನು ಅತ್ತೆಗಾಗಿ ಮಾಡಿದ್ದ ಎಲ್ಲವನ್ನೂ ಕುರಿತು ಕೇಳಿದ್ದೇನೆ. ನೀನು ಹೇಗೆ ನಿನ್ನ ತಂದೆತಾಯಿಗಳನ್ನು ಮತ್ತು ಸ್ವಂತ ನಾಡನ್ನು ಬಿಟ್ಟು, ಅಪರಿಚಿತರಾದ ಜನರ ಮಧ್ಯೆ ವಾಸಿಸಲು ಬಂದಿರುವೆ ಎಂಬುದು ಸಹ ನನಗೆ ತಿಳಿದಿದೆ.</verse>
				<verse number="12">ನೀನು ಮಾಡಿದ್ದಕ್ಕೆಲ್ಲಾ ದೇವರು ನಿನಗೆ ತಕ್ಕ ಪ್ರತಿಫಲವನ್ನೀಯಲಿ. ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಆಶ್ರಯವನ್ನರಸಿ ಬಂದಿರುವೆ. ಅವರು ನಿನಗೆ ಹೇರಳವಾದ ಆಶೀರ್ವಾದವನ್ನು ಅನುಗ್ರಹಿಸಲಿ!” ಎಂದನು.</verse>
				<verse number="13">ಆಗ ರೂತಳು, “ಒಡೆಯಾ, ತಾವು ನನಗೆ ದೊಡ್ಡ ಉಪಕಾರವನ್ನು ಮಾಡಿದ್ದೀರಿ. ನಾನು ತಮ್ಮ ದಾಸಿ ಎನಿಸಿಕೊಳ್ಳುವುದಕ್ಕೂ ಯೋಗ್ಯಳಲ್ಲ. ಆದರೂ ನನ್ನನ್ನು ಕನಿಕರಿಸಿ ಪ್ರೀತಿಯಿಂದ ಮಾತನಾಡಿದ್ದೀರಿ,” ಎಂದು ಹೇಳಿದಳು.</verse>
				<verse number="14">ಊಟದ ಸಮಯದಲ್ಲಿ ಬೋವಜನು ರೂತಳನ್ನು ಕರೆದು, “ಇಲ್ಲಿ ಬಾ, ರೊಟ್ಟಿಯನ್ನು ತೆಗೆದುಕೊಂಡು ದ್ರಾಕ್ಷಾರಸದಲ್ಲಿ ಅದ್ದಿ ತಿನ್ನು,” ಎಂದನು. ಆಕೆ ಕೊಯ್ಯುವವರ ಸಂಗಡ ಕುಳಿತುಕೊಂಡಳು. ಇದಲ್ಲದೆ ಬೋವಜನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಅವಳು ತೃಪ್ತಿಯಾಗಿ ಊಟಮಾಡಿ ಇನ್ನೂ ಸ್ವಲ್ಪ ಉಳಿಸಿಕೊಂಡಳು.</verse>
				<verse number="15">ಅವಳು ಪುನಃ ಹಕ್ಕಲು ತೆನೆಗಳನ್ನು ಆರಿಸಿಕೊಳ್ಳಲು ಹೋದಾಗ, ಬೋವಜನು ತನ್ನ ಆಳುಗಳಿಗೆ, “ಸಿವುಡುಗಳ ಮಧ್ಯದಲ್ಲೂ ಅವಳು ತೆನೆಗಳನ್ನು ಆರಿಸಿಕೊಳ್ಳಲಿ; ಅಡ್ಡಿಮಾಡಬೇಡಿ.</verse>
				<verse number="16">ನೀವು ಕೊಯ್ಯುವಾಗ ಕೆಲವು ತೆನೆಗಳಿಂದ ಕಟ್ಟುಗಳಿಂದ ಕಿತ್ತು ಕೆಳಗೆ ಹಾಕಿರಿ. ಅವಳು ಆಯ್ದುಕೊಳ್ಳಲಿ; ಯಾರೂ ಅವಳನ್ನು ಗದರಿಸಬೇಡಿ,” ಎಂದು ಆಜ್ಞೆಯಿತ್ತನು.</verse>
				<verse number="17">ಅದರಂತೆಯೇ ರೂತಳು ಸಾಯಂಕಾಲದವರೆಗೆ ತೆನೆಗಳನ್ನು ಆಯ್ದುಕೊಂಡಳು. ಅವನ್ನು ಬಡಿದಾಗ ಸುಮಾರು ಅರ್ಧ ಚೀಲದಷ್ಟು ಜವೆಗೋದಿ ಸಿಕ್ಕಿತು.</verse>
				<verse number="18">ಅದನ್ನು ತೆಗೆದುಕೊಂಡು ಊರೊಳಕ್ಕೆ ಹೋಗಿ ತನ್ನ ಅತ್ತೆಗೆ ತೋರಿಸಿದಳು. ಅಂತೆಯೇ ತನ್ನ ಆಹಾರದಿಂದ ಉಳಿಸಿಟ್ಟಿದ್ದನ್ನು ತನ್ನ ಅತ್ತೆಗೆ ಕೊಟ್ಟಳು.</verse>
				<verse number="19">ಅದನ್ನು ನೋಡಿ ನವೊಮಿ, “ನೀನು ಈ ದಿನ ಎಲ್ಲಿ ಹಕ್ಕಲಾಯ್ದೆ? ಯಾರ ಹೊಲದಲ್ಲಿ ಕೆಲಸಮಾಡಿದೆ? ನಿನಗೆ ದಯೆ ತೋರಿಸಿದವನಿಗೆ ಶುಭವಾಗಲಿ!” ಎಂದಳು. ಅದಕ್ಕೆ ರೂತಳು, “ನಾನು ತೆನೆ ಆಯ್ದುಕೊಂಡ ಹೊಲವು ಬೋವಜನದು,” ಎಂದು ಹೇಳಿದಳು.</verse>
				<verse number="20">ಇದನ್ನು ಕೇಳಿದ ನವೊಮಿ ಆವೇಶದಿಂದ, “ಜೀವಂತರಿಗೂ ಮೃತರಿಗೂ ಮಾಡಿದ ವಾಗ್ದಾನಗಳನ್ನು ನೆರವೇರಿಸುವ ಸರ್ವೇಶ್ವರ ಅವನನ್ನು ಆಶೀರ್ವದಿಸಲಿ!” ಎಂದು ಹರಸಿ, “ಆ ಮನುಷ್ಯ ನಮಗೆ ಹತ್ತಿರದ ನೆಂಟ, ನಮ್ಮನ್ನು ಪೋಷಿಸಬೇಕಾದವನು,” ಎಂದು ತಿಳಿಸಿದಳು.</verse>
				<verse number="21">ಇದಲ್ಲದೆ ರೂತಳು, “ಸುಗ್ಗಿಕಾಲ ತೀರುವವರೆಗೂ ನನ್ನ ಆಳುಗಳ ಜೊತೆಯಲ್ಲೇ ಇರಬಹುದೆಂದು ಹೇಳಿದ್ದಾನೆ,” ಎಂದಳು.</verse>
				<verse number="22">ಅದಕ್ಕೆ ನವೊಮಿ ತನ್ನ ಸೊಸೆಗೆ, “ಹೌದು, ಮಗಳೇ, ನೀನು ಆತನ ಹೆಣ್ಣಾಳುಗಳ ಸಂಗಡ ಇರುವುದೇ ಒಳ್ಳೆಯದು; ಬೇರೆಯವರ ಹೊಲದಲ್ಲಿ ನಿನಗೆ ತೊಂದರೆಯಾದೀತು,” ಎಂದು ಸಲಹೆಕೊಟ್ಟಳು.</verse>
				<verse number="23">ಅದರಂತೆಯೆ ರೂತಳು ಜವೆಗೋದಿ ಮತ್ತು ಗೋದಿಯ ಸುಗ್ಗಿ ಮುಗಿಯುವವರೆಗೂ ಬೋವಜನ ಹೆಣ್ಣಾಳುಗಳ ಸಂಗಡ ತೆನೆಗಳನ್ನು ಆಯ್ದುಕೊಳ್ಳುತ್ತಾ ಇದ್ದಳು. ಅತ್ತೆಯ ಮನೆಯಲ್ಲೇ ವಾಸಿಸುತ್ತಿದ್ದಳು.</verse>
			</chapter>
			<chapter number="3">
				<verse number="1">ಒಂದು ದಿನ ನವೊಮಿ ರೂತಳಿಗೆ, “ಮಗಳೇ, ನೀನು ಮತ್ತೆ ಗೃಹಿಣಿಯಾಗಿ ಸುಖದಿಂದ ಬಾಳುವಂತೆ ಏರ್ಪಾಟು ಮಾಡುವುದು ನನ್ನ ಕರ್ತವ್ಯವಲ್ಲವೇ?</verse>
				<verse number="2">ಆ ಬೋವಜನು ನಮ್ಮ ನೆಂಟ. ಅವನ ಹೆಣ್ಣಾಳುಗಳ ಜೊತೆಯಲ್ಲಿ ನೀನು ತೆನೆ ಆರಿಸಿಕೊಳ್ಳುತ್ತಿದ್ದೀಯಲ್ಲವೇ? ಈಗ ನಾನು ಹೇಳುವುದನ್ನು ಗಮನಿಸು; ಈ ಸಂಜೆ ಬೋವಜನು ಕಣದಲ್ಲಿ ಜವೆಗೋದಿಯನ್ನು ತೂರುವನು.</verse>
				<verse number="3">ನೀನು ಸ್ನಾನಮಾಡಿಕೊಂಡು ಸುಗಂಧ ತೈಲವನ್ನು ಹಚ್ಚಿ, ಸೊಗಸಾದ ಉಡುಪನ್ನು ತೊಟ್ಟುಕೊ. ಆಮೇಲೆ ಕಣಕ್ಕೆ ಹೋಗು. ಅವನು ಅನ್ನಪಾನಮಾಡಿ ಮುಗಿಸುವವರೆಗೂ ಅವನಿಗೆ ಕಾಣಿಸಿಕೊಳ್ಳಬೇಡ.</verse>
				<verse number="4">ಅವನು ಎಲ್ಲಿ ಮಲಗುತ್ತಾನೆ ಎಂಬುದನ್ನು ಗೊತ್ತುಮಾಡಿಕೊ. ಅವನು ಮಲಗಿದ ಮೇಲೆ ಅಲ್ಲಿಗೆ ಹೋಗು. ಅವನ ಪಾದಗಳ ಮೇಲಿನ ಹೊದಿಕೆಯನ್ನು ಮೆತ್ತಗೆ ಸರಿಸಿಬಿಟ್ಟು ಪಕ್ಕದಲ್ಲೇ ಮಲಗು. ಆಮೇಲೆ ನೀನು ಮಾಡಬೇಕಾದುದೇನೆಂಬುದನ್ನು ಅವನೇ ತಿಳಿಸುವನು,” ಎಂದು ಹೇಳಿದಳು.</verse>
				<verse number="5">ರೂತಳು: “ನೀನು ಹೇಳಿದಂತೆಯೇ ನಾನು ಮಾಡುತ್ತೇನೆ,” ಎಂದು ಮರುತ್ತರಕೊಟ್ಟಳು.</verse>
				<verse number="6">ಅದರಂತೆ ರೂತಳು ಕಣಕ್ಕೆ ಹೋಗಿ ಅತ್ತೆ ಹೇಳಿಕೊಟ್ಟಂತೆ ಮಾಡಿದಳು</verse>
				<verse number="7">ಇತ್ತ ಬೋವಜನು ಅನ್ನಪಾನ ಮಾಡಿ ಸಂತುಷ್ಟನಾಗಿದ್ದನು. ಅನಂತರ ಜವೆಗೋದಿಯ ರಾಶಿಯ ಬಳಿ ಹೋಗಿ ಮಲಗಿಕೊಂಡನು. ರೂತಳು ನಿಶ್ಯಬ್ಧವಾಗಿ ಅವನ ಬಳಿಗೆ ಹೋದಳು. ಅವನ ಪಾದಗಳ ಮೇಲಿದ್ದ ಹೊದಿಕೆಯನ್ನು ಮೆತ್ತಗೆ ಸರಿಸಿ, ಅಲ್ಲೇ ಮಲಗಿಕೊಂಡಳು. ಸುಮಾರು ನಡುರಾತ್ರಿಯಲ್ಲಿ ಅವನಿಗೆ ತಟ್ಟನೆ ಎಚ್ಚರವಾಯಿತು. ಬಗ್ಗಿ ನೋಡಿದಾಗ ಸ್ತ್ರೀಯೊಬ್ಬಳು ಪಾದಗಳ ಬಳಿ ಮಲಗಿರುವುದನ್ನು ಕಂಡು ಚಕಿತಗೊಂಡು, “ನೀನು ಯಾರು?” ಎಂದು ಕೇಳಿದನು.</verse>
				<verse number="8">ಅದಕ್ಕೆ ರೂತಳು: “ಒಡೆಯಾ, ನಾನು ನಿಮ್ಮ ದಾಸಿ ರೂತಳು. ನೀವು ನನ್ನ ಹತ್ತಿರದ ನೆಂಟರಾಗಿ ಇರುವುದರಿಂದ ದಯವಿಟ್ಟು ನಿಮ್ಮ ಹೊದಿಕೆಯ ಅಂಚನ್ನು ನನ್ನ ಮೇಲೆ ಹಾಕಿ,” ಎಂದು ಕೇಳಿಕೊಂಡಳು.</verse>
				<verse number="9"></verse>
				<verse number="10">ಬೋವಜನು: “ಮಗಳೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ! ನೀನು ಬಡ ಯೌವನಸ್ಥನನ್ನಾಗಲೀ, ಸಿರಿವಂತ ಯೌವನಸ್ಥನನ್ನಾಗಲೀ ಅರಸಲಿಲ್ಲ. ನೀನು ನನಗೆ ತೋರಿದ ವಂಶ ಗೌರವವು ಇಲ್ಲಿಯವರೆಗೆ ನೀನು ಅತ್ತೆಗೆ ತೋರಿದ ಗೌರವಕ್ಕಿಂತಲೂ ಶ್ರೇಷ್ಠವಾದುದು.</verse>
				<verse number="11">ಮಗಳೇ, ಭಯಪಡಬೇಡ, ನೀನು ಸುಗುಣಶೀಲೆ ಎಂದು ಊರಿಗೆಲ್ಲಾ ತಿಳಿದಿದೆ; ನೀನು ಕೇಳಿಕೊಂಡದ್ದನ್ನು ನೆರವೇರಿಸುವೆನು.</verse>
				<verse number="12">ನಾನು ನಿಮಗೆ ಹತ್ತಿರದ ನೆಂಟನಾಗಿರುವುದೇನೋ ನಿಜ. ನಿನ್ನನ್ನು ಸಲಹುವ ಮೈದುನ ಕರ್ತವ್ಯ ನನ್ನದು. ಆದರೆ ನನಗಿಂತಲೂ ಹತ್ತಿರದ ನೆಂಟನೊಬ್ಬನಿದ್ದಾನೆ.</verse>
				<verse number="13">ಈ ರಾತ್ರಿ ಇಲ್ಲೇ ಇರು. ಅವನು ನಿನ್ನನ್ನು ಸಲಹುವ ಜವಾಬ್ದಾರಿ ವಹಿಸಿಕೊಳ್ಳುವನೋ ಇಲ್ಲವೋ ಎಂಬುದನ್ನು ನಾಳೆ ವಿಚಾರಿಸಿಕೊಳ್ಳೋಣ. ಅವನು ಅದನ್ನು ವಹಿಸಿಕೊಳ್ಳುವುದಾದರೆ ಒಳ್ಳೆಯದು. ಇಲ್ಲವಾದರೆ ನಾನೇ ಆ ಕರ್ತವ್ಯವನ್ನು ವಹಿಸಿಕೊಳ್ಳುತ್ತೇನೆ ಎಂದು ಜೀವಸ್ವರೂಪರಾದ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ಇನ್ನು ನಿಶ್ಚಿಂತಳಾಗಿ ಮಲಗು,” ಎಂದನು.</verse>
				<verse number="14">ಅದರಂತೆ ಅವಳು ಅವನ ಪಾದಗಳ ಬಳಿಯಲ್ಲೇ ಮಲಗಿದಳು. ಅವಳು ಅಲ್ಲಿಗೆ ಬಂದದ್ದು ಯಾರಿಗೂ ತಿಳಿಯಬಾರದೆಂದು ಬೋವಜನು ಹೇಳಿದ್ದನು; ಎಂತಲೇ ನಸುಕಿನಲ್ಲೇ ಎದ್ದಳು.</verse>
				<verse number="15">ಬೋವಜನು ಆಕೆಗೆ, “ನಿನ್ನ ಮೇಲ್ಹೊದಿಕೆಯನ್ನು ಹಾಸು,” ಎಂದು ಹೇಳಿ ಅದರಲ್ಲಿ ಸುಮಾರು ಇಪ್ಪತ್ತೈದು ಕಿಲೋಗ್ರಾಂನಷ್ಟು ಜವೆಗೋದಿಯನ್ನು ಸುರಿದು, ಅದನ್ನೆತ್ತಿ ಹೊರಿಸಿದನು. ಆಕೆ ಅದನ್ನು ಹೊತ್ತುಕೊಂಡು ಊರೊಳಗೆ ಹೋದಳು.</verse>
				<verse number="16">ಅತ್ತೆಯ ಬಳಿಗೆ ಬಂದಾಗ, “ನೀನು ಹೋಗಿದ್ದ ಕಾರ್ಯ ಏನಾಯಿತು?” ಎಂದು ಕೇಳಲು, ರೂತಳು ಬೋವಜನು ತನಗೆ ಮಾಡಿದ್ದೆಲ್ಲವನ್ನು ತಿಳಿಸಿದಳು.</verse>
				<verse number="17">ಇದಲ್ಲದೆ, ಅತ್ತೆಯ ಬಳಿಗೆ ಬರಿಗೈಯಲ್ಲಿ ಹೋಗಬೇಡ, ಎಂದು ಹೇಳಿ ಇಷ್ಟೊಂದು ಜವೆಗೋದಿಯನ್ನು ಕೊಟ್ಟನು,” ಎಂದು ಹೇಳಿದಳು.</verse>
				<verse number="18">ಆಗ ನವೊಮಿ, “ಮಗಳೇ, ಇದರ ಫಲಿತಾಂಶ ಏನಾಗುವುದೆಂದು ಗೊತ್ತಾಗುವವರೆಗೂ ತಾಳ್ಮೆಯಿಂದಿರು. ಬೋವಜನು ಈ ವಿಷಯವನ್ನು ಇತ್ಯರ್ಥ ಮಾಡುವವರೆಗೆ ಸುಮ್ಮನಿರಲಾರನು,” ಎಂದು ಹೇಳಿದಳು.</verse>
			</chapter>
			<chapter number="4">
				<verse number="1">ಇತ್ತ ಬೋವಜನು ಊರಿನ ಸಭಾಮಂಟಪದ ಬಳಿ ಹೋಗಿ ಅಲ್ಲಿ ಕುಳಿತುಕೊಂಡನು.</verse>
				<verse number="2">ಅಷ್ಟರಲ್ಲಿ, ಬೋವಜನು ಮುಂಚೆ ಹೇಳಿದ್ದ ಎಲಿಮೆಲೆಕನಿಗೆ ಹತ್ತಿರದ ನೆಂಟನಾಗಿದ್ದವನು ಅಲ್ಲಿಗೆ ಬಂದನು. ಆಗ ಬೋವಜನು ಅವನಿಗೆ: “ಬಾರಪ್ಪಾ, ಇಲ್ಲಿ ಕುಳಿತುಕೊ,” ಎಂದು ಕರೆಯಲು, ಅವನು ಬಂದು ಪಕ್ಕದಲ್ಲೇ ಕುಳಿತುಕೊಂಡನು.</verse>
				<verse number="3">ಆಮೇಲೆ ಬೋವಜನು ಹಿರಿಯರಲ್ಲಿ ಹತ್ತುಮಂದಿಯನ್ನು ಕರೆಸಿದನು. ಅವರೂ ಅಲ್ಲಿಗೆ ಬಂದು ಕುಳಿತುಕೊಂಡರು. ಅನಂತರ ಬೋವಜನು ಆ ನೆಂಟನಿಗೆ, “ನಮಗೆ ಸ್ವಂತದವನಾದ ಎಲಿಮೆಲೆಕನಿಗೆ ಸೇರಿದ ಒಂದು ತುಂಡು ಹೊಲ ಇದೆಯಲ್ಲವೇ? ಅದನ್ನು ಮೋವಾಬ್ ನಾಡಿನಿಂದ ಹಿಂದಕ್ಕೆ ಬಂದಿರುವ ನವೊಮಿಯು ಮಾರಬೇಕೆಂದಿದ್ದಾಳೆ. ಇದನ್ನು ನಿನಗೆ ತಿಳಿಸಬೇಕೆನಿಸಿತು.</verse>
				<verse number="4">ಆ ಹೊಲವನ್ನು ಕೊಂಡುಕೊಳ್ಳಲು ನಿನಗೆ ಮನಸ್ಸಿದ್ದರೆ ಇಲ್ಲಿ ಕುಳಿತಿರುವ ಹಿರಿಯರ ಮುಂದೆ ಕೊಂಡುಕೊಳ್ಳುವ ಹಕ್ಕು ಮೊದಲು ನಿನಗೆ, ಅನಂತರ ನನಗೆ ಸೇರಿದ್ದು; ಬೇರೆಯವರಿಗಲ್ಲ,” ಎಂದನು. ಆಗ ಆ ವ್ಯಕ್ತಿ: “ನಾನೇ ಕೊಂಡುಕೊಳ್ಳುತ್ತೇನೆ,” ಎಂದು ಹೇಳಿದನು.</verse>
				<verse number="5">ಆಗ ಬೋವಜನು, “ನೀನು ಆ ಹೊಲವನ್ನು ಕೊಂಡುಕೊಳ್ಳುವುದಾದರೆ, ಅವಳ ಸೊಸೆಯಾದ ಮೋವಾಬದ ರೂತಳನ್ನು ನೀನು ಮದುವೆಯಾಗಬೇಕು. ಆಗ ಆ ಹೊಲದ ಖಾತೆ ಗತಿಸಿದ ಮಗನ ಹೆಸರಿನಲ್ಲೇ ಉಳಿಯುತ್ತದೆ,” ಎಂದು ತಿಳಿಸಿದನು.</verse>
				<verse number="6">ಅದಕ್ಕೆ ಆ ವ್ಯಕ್ತಿ, “ಹಾಗಾದರೆ ಹೊಲವನ್ನು ಕೊಂಡುಕೊಳ್ಳುವ ಹಕ್ಕನ್ನು ನಾನು ಬಿಟ್ಟುಕೊಡುತ್ತೇನೆ. ಇಲ್ಲದಿದ್ದರೆ ನನ್ನ ಕುಟುಂಬಕ್ಕೆ ಸೇರಿರುವ ಆಸ್ತಿಗೆ ನಷ್ಟವಾಗುತ್ತದೆ. ಆದ್ದರಿಂದ ಆ ಹಕ್ಕನ್ನು ನೀನೇ ವಹಿಸಿಕೋ, ನನ್ನಿಂದಾಗದು,” ಎಂದುಬಿಟ್ಟನು.</verse>
				<verse number="7">ಇಸ್ರಯೇಲರಲ್ಲಿ ಆಸ್ತಿಪಾಸ್ತಿಯನ್ನು ಮಾರಾಟಮಾಡುವಾಗ ಅಥವಾ ವಿನಿಮಯಿಸಿಕೊಳ್ಳುವಾಗ ಒಂದು ಪದ್ಧತಿ ರೂಢಿಯಲ್ಲಿತ್ತು; ಕೊಡುವವನು ಕೊಳ್ಳುವವನಿಗೆ ತನ್ನ ಪಾದರಕ್ಷೆಯನ್ನು ಕೊಡುತ್ತಿದ್ದನು. ಹೀಗೆ ಇಸ್ರಯೇಲರ ಮಧ್ಯೆ ವ್ಯವಹಾರವು ಇತ್ಯರ್ಥವಾಗುತ್ತಿತ್ತು.</verse>
				<verse number="8">ಅಂತೆಯೇ ಆ ನೆಂಟನು, “ಹೊಲವನ್ನು ನೀನೇ ಕೊಂಡುಕೊ,” ಎಂದು ಹೇಳಿ ತನ್ನ ಪಾದರಕ್ಷೆಯನ್ನು ಬೋವಜನಿಗೆ ತೆಗೆದುಕೊಟ್ಟನು.</verse>
				<verse number="9">ಆಗ ಬೋವಜನು ಊರಿನ ಹಿರಿಯರೆಲ್ಲರಿಗೆ ಹಾಗು ಅಲ್ಲಿ ನೆರೆದಿದ್ದ ಜನರಿಗೆ, “ಎಲಿಮೆಲೆಕನಿಗೆ ಮತ್ತು ಕಲ್ಯೋನ್, ಮಹ್ಲೋನ್ ಇವರಿಗೆ ಸೇರಿದ್ದ ಆಸ್ತಿ ಎಲ್ಲವನ್ನೂ ನವೊಮಿಯಿಂದ ನಾನು ಕೊಂಡುಕೊಂಡಿದ್ದೇನೆ. ಇದಕ್ಕೆ ನೀವೆಲ್ಲರೂ ಸಾಕ್ಷಿಗಳು.</verse>
				<verse number="10">ಇದಲ್ಲದೆ, ಮಹ್ಲೋನನ ಪತ್ನಿಯಾದ ಮೋವಾಬ್ಯದ ರೂತಳನ್ನು ನನ್ನ ಹೆಂಡತಿಯನ್ನಾಗಿ ಸ್ವೀಕರಿಸಿದ್ದೇನೆ. ಇದರಿಂದ ಹೊಲದ ಖಾತೆ ಗತಿಸಿದ ಮಹ್ಲೋನನ ಹೆಸರಿನಲ್ಲೇ ಉಳಿಯುವುದು. ಮಾತ್ರವಲ್ಲ, ಅವನ ವಂಶವೃಕ್ಷವು ಅವನ ಬಂಧುಬಳಗದವರಲ್ಲೂ ಊರಿನಲ್ಲೂ ನೆಲೆಯಾಗಿರುವುದು. ಇದಕ್ಕೆ ನೀವೆಲ್ಲರೂ ಸಾಕ್ಷಿಗಳು,” ಎಂದನು.</verse>
				<verse number="11">ಆಗ ಊರಿನ ಹಿರಿಯರು ಮತ್ತು ನೆರೆದಿದ್ದ ಸಭಿಕರು: “ಹೌದು, ನಾವೆಲ್ಲರೂ ಸಾಕ್ಷಿಗಳು. ಇಸ್ರಯೇಲಿನ ಮನೆತನವನ್ನು ವೃದ್ಧಿಗೊಳಿಸಿದ ರಾಹೆಲ್ ಮತ್ತು ಲೆಯಾ ಎಂಬ ಕುಲೀನೆಯರನ್ನು ಸರ್ವೇಶ್ವರ ಆಶೀರ್ವದಿಸಲಿ! ಎಫ್ರಾತ ಕುಲದಲ್ಲಿ ಧನವಂತನಾಗು;</verse>
				<verse number="12">ಬೆತ್ಲೆಹೇಮಿನಲ್ಲಿ ಘನವಂತನಾಗು! ಆ ಯುವತಿಯ ಮುಖಾಂತರ ಸರ್ವೇಶ್ವರ ನಿನಗೆ ಅನುಗ್ರಹಿಸುವ ಸಂತಾನದಿಂದ ನಿನ್ನ ಮನೆತನವು, ಯೆಹೂದನಿಗೆ ತಾಮಾರಳಿಂದ ಹುಟ್ಟಿದ ಪೆರೆಚನ ಮನೆತನದಂತೆ ಪ್ರಖ್ಯಾತವಾಗಲಿ!” ಎಂದು ಹರಸಿದರು.</verse>
				<verse number="13">ಬೋವಜನು ರೂತಳನ್ನು ಮದುವೆಯಾಗಿ ಮನೆಗೆ ಕರೆದುಕೊಂಡು ಹೋದನು. ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ಆಕೆ ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆತ್ತಳು. ಊರಿನ ಮಹಿಳೆಯರು ನವೊಮಿಗೆ:</verse>
				<verse number="14">“ಸರ್ವೇಶ್ವರ ಸ್ವಾಮಿಗೆ ಸ್ತುತಿ ಸ್ತೋತ್ರ! ನಿನಗೊಬ್ಬ ವಂಶೋದ್ಧಾರಕನನ್ನು ಅನುಗ್ರಹಿಸಿದ ಇಸ್ರಯೇಲ್ ನಾಡಿನಲ್ಲಿ ಆ ಮಗು ಪ್ರಖ್ಯಾತನಾಗಲಿ!</verse>
				<verse number="15">ಅವನು ನಿನಗೆ ನವಚೈತನ್ಯವನ್ನು ಕೊಟ್ಟು ವೃದ್ಧಾಪ್ಯದಲ್ಲಿ ನಿನಗೆ ಸಂರಕ್ಷಣೆಯನ್ನು ನೀಡುವನು. ಸಪ್ತಕುವರರಿಗಿಂತ ನಿನಗೆ ಮೆಚ್ಚುಗೆ ಆದ ನಿನ್ನ ಪ್ರಿಯ ಸೊಸೆ ಈ ಮಗುವನ್ನು ನಿನಗೆ ಕೊಟ್ಟಿದ್ದಾಳೆ!” ಎಂದು ಹರಸಿದರು.</verse>
				<verse number="16">ನವೊಮಿ ಆ ಮಗುವನ್ನು ಎತ್ತಿಕೊಂಡು ತನ್ನ ಮಡಿಲಲ್ಲಿಟ್ಟುಕೊಂಡು ಸಾಕಿ ಸಲಹಿದಳು.</verse>
				<verse number="17">ನೆರೆಹೊರೆಯ ಮಹಿಳೆಯರು, “ನವೊಮಿಗೆ ಕುಲಪುತ್ರನೊಬ್ಬನು ಹುಟ್ಟಿದ್ದಾನೆ!” ಎಂದು ಹೇಳಿ ಆ ಮಗುವಿಗೆ “ಓಬೇದ್” ಎಂದು ಹೆಸರಿಟ್ಟರು. ಇವನೇ ಜೆಸ್ಸೆಯ ತಂದೆ, ದಾವೀದನ ತಾತ.</verse>
				<verse number="18">ಪೆರೆಚನಿಂದ ದಾವೀದನವರೆಗಿನ ವಂಶಾವಳಿ: ಪೆರೆಚನಿಗೆ ಹೆಚ್ರೋನನು, ಹೆಚ್ರೋನನಿಗೆ ರಾಮನು, ರಾಮನಿಗೆ ಅಮಿನದಾಬನು ಹುಟ್ಟಿದರು. ಅಮಿನದಾಬನಿಗೆ ನಹಶೋನ, ನಹಶೋನನಿಗೆ ಸಲ್ಮೋನ್, ಸಲ್ಮೋನನಿಗೆ ಬೋವಜನು ಹುಟ್ಟಿದರು. ಬೋವಜನಿಗೆ ಓಬೇದ್, ಓಬೇದನಿಗೆ ಜೆಸ್ಸಯ, ಜೆಸ್ಸಯನಿಗೆ ದಾವೀದ ಹುಟ್ಟಿದರು.</verse>
			</chapter>
		</book>
		<book number="9">
			<chapter number="1">
				<verse number="1">ಎಫ್ರಯಿಮ್ ಬೆಟ್ಟದ ಪ್ರದೇಶದಲ್ಲಿ ರಾಮಾ ಒಂದು ಊರು. ಆ ಊರಲ್ಲಿ ‘ಎಲ್ಕಾನ’ ಎಂಬ ಒಬ್ಬ ಮನುಷ್ಯನಿದ್ದ. ಇವನು ಯೆರೋಹಾಮನ ಮಗ, ಎಲೀಹುವಿನ ಮೊಮ್ಮಗ ಹಾಗು ತೋಹುವಿನ ಮರಿಮಗ. ಈ ತೋಹು ಎಂಬುವನು ಎಫ್ರಯಿಮ್ಯನಾದ ಚೂಫನ ಮಗ.</verse>
				<verse number="2">ಎಲ್ಕಾನನಿಗೆ ಇಬ್ಬರು ಹೆಂಡತಿಯರು. ಒಬ್ಬಳು ಹನ್ನ. ಇನ್ನೊಬ್ಬಳು ಪೆನಿನ್ನ. ಪೆನಿನ್ನಗೆ ಮಕ್ಕಳು ಇದ್ದರು; ಆದರೆ ಹನ್ನಳಿಗೆ ಇರಲಿಲ್ಲ.</verse>
				<verse number="3">ಎಲ್ಕಾನನು ಪ್ರತಿ ವರ್ಷ ರಾಮಾದಿಂದ ಶಿಲೋವಿಗೆ ಹೋಗಿ ಸೇನಾಧೀಶ್ವರರಾದ ಸರ್ವೇಶ್ವರಸ್ವಾಮಿಗೆ ಬಲಿದಾನವನ್ನು ಸಮರ್ಪಿಸಿ ಆರಾಧಿಸುತ್ತಿದ್ದನು. ಅಲ್ಲಿ ಏಲಿಯನ ಮಕ್ಕಳಾದ ಹೊಫ್ನಿ, ಫೀನೆಹಾಸ ಎಂಬವರು ಸರ್ವೇಶ್ವರನ ಯಾಜಕರಾಗಿದ್ದರು.</verse>
				<verse number="4">ಎಲ್ಕಾನನು ಬಲಿಯರ್ಪಿಸಿದಾಗಲೆಲ್ಲಾ ತನ್ನ ಹೆಂಡತಿಯಾದ ಪೆನಿನ್ನಳಿಗೂ ಆಕೆಯ ಎಲ್ಲ ಗಂಡು-ಹೆಣ್ಣು ಮಕ್ಕಳಿಗೂ ಬಲಿಭೋಜನದ ಒಂದೊಂದು ಭಾಗವನ್ನು ಕೊಡುತ್ತಿದ್ದನು.</verse>
				<verse number="5">ಅವನು ಹನ್ನಳನ್ನು ಬಹಳವಾಗಿ ಪ್ರೀತಿಸುತ್ತಿದ್ದರೂ ಒಂದು ಭಾಗವನ್ನು ಮಾತ್ರ ಆಕೆಗೆ ಕೊಡುತ್ತಾ ಇದ್ದನು. ಏಕೆಂದರೆ ಸರ್ವೇಶ್ವರ ಆಕೆಗೆ ಮಕ್ಕಳನ್ನು ಕೊಟ್ಟಿರಲಿಲ್ಲ.</verse>
				<verse number="6">ಇದಲ್ಲದೆ, “ಸರ್ವೇಶ್ವರ ನಿನ್ನನ್ನು ಬಂಜೆಯಾಗಿ ಮಾಡಿದ್ದಾರೆ,” ಎಂಬ ಚುಚ್ಚು ಮಾತುಗಳಿಂದ ನೋಯಿಸುತ್ತಿದ್ದಳು ಅವಳ ಸವತಿಯಾದ ಪೆನಿನ್ನಳು.</verse>
				<verse number="7">ವರ್ಷ ವರ್ಷವೂ ಇದು ಹಾಗೆಯೆ ನಡೆಯುತ್ತಿತ್ತು; “ಸರ್ವೇಶ್ವರನ ಮಂದಿರಕ್ಕೆ ಹೋದಾಗಲೆಲ್ಲ ಪೆನಿನ್ನಳು ಹನ್ನಳನ್ನು ಕೆಣಕುತ್ತಿದ್ದಳು. ಇದರಿಂದಾಗಿ ಒಮ್ಮೆ ಹನ್ನಳು ಊಟ ಮಾಡಲೊಲ್ಲದೆ ಅಳುತ್ತಾ ಇದ್ದಳು.</verse>
				<verse number="8">ಆಗ ಆಕೆಯ ಗಂಡ ಎಲ್ಕಾನನು ಆಕೆಗೆ, “ಹನ್ನಾ, ಏಕೆ ಅಳುತ್ತಿರುವೆ? ಊಟಮಾಡದಿರುವುದಕ್ಕೆ ಕಾರಣ ಏನು? ವ್ಯಸನಪಡುವುದು ಏಕೆ? ಹತ್ತು ಮಕ್ಕಳಿಗಿಂತಲು ನಾನು ನಿನಗೆ ಹೆಚ್ಚಲ್ಲವೆ?” ಎಂದನು</verse>
				<verse number="9">ಶಿಲೋವಿನಲ್ಲಿ ಅವರು ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ ಹನ್ನಳು ಎದ್ದು ಸರ್ವೇಶ್ವರನ ಮಂದಿರಕ್ಕೆ ಬಂದಳು. ಯಾಜಕ ಏಲಿಯನು ಆ ಮಂದಿರದ ದ್ವಾರದ ನಿಲುವು ಪಟ್ಟಿಗಳ ಬಳಿ ಒಂದು ಪೀಠದ ಮೇಲೆ ಕುಳಿತಿದ್ದನು.</verse>
				<verse number="10">ಹನ್ನಳು ಬಹು ದುಃಖದಿಂದ ಕಣ್ಣೀರಿಡುತ್ತಾ ಸರ್ವೇಶ್ವರನಲ್ಲಿ ಹೀಗೆಂದು ಪ್ರಾರ್ಥಿಸಿದಳು:</verse>
				<verse number="11">“ಸರ್ವಶಕ್ತರಾದ ಸರ್ವೇಶ್ವರಾ, ನಿಮ್ಮ ದಾಸಿ ಆದ ನನ್ನ ದುಃಖವನ್ನು ನೀಗಿಸಿರಿ; ನನ್ನನ್ನು ಪರಾಂಬರಿಸಿರಿ; ನನ್ನನ್ನು ತಿರಸ್ಕರಿಸದೆ ಕನಿಕರಪಟ್ಟು ನನಗೊಬ್ಬ ಮಗನನ್ನು ಅನುಗ್ರಹಿಸಿ. ಅವನನ್ನು ಅಮರಣಾಂತರ ನಿಮಗೇ ಸಮರ್ಪಿಸುವೆನು; ಅವನ ತಲೆಯ ಮೇಲೆ ಕ್ಷೌರಕತ್ತಿಯನ್ನು ಬರಗೊಡಿಸುವುದಿಲ್ಲ ಎಂದು ಹರಕೆ ಮಾಡುತ್ತೇನೆ.”</verse>
				<verse number="12">ಹನ್ನಳು ಬಹಳ ಹೊತ್ತಿನವರೆಗೆ ಸರ್ವೇಶ್ವರನ ಮುಂದೆ ಪ್ರಾರ್ಥನೆ ಸಲ್ಲಿಸುತ್ತಾ ಇದ್ದಳು. ಏಲಿ ಆಕೆಯ ಬಾಯನ್ನು ಗಮನಿಸಿದನು.</verse>
				<verse number="13">ಆಕೆ ಹೃದಯಾಂತರಾಳದಿಂದ ಪ್ರಾರ್ಥಿಸುತ್ತಾ ಇದ್ದಳು; ತುಟಿಗಳು ಅಲುಗಾಡುತ್ತಿದ್ದವು, ಶಬ್ದ ಮಾತ್ರ ಕೇಳಿಸುತ್ತಿರಲಿಲ್ಲ. ಆದುದರಿಂದ ಇವಳು ಕುಡಿದಿರಬೇಕೆಂದು ತಿಳಿದು,</verse>
				<verse number="14">“ನಿನ್ನ ಕುಡಿತದ ಅಮಲು ಇನ್ನೂ ಇಳಿಯಲಿಲ್ಲವೆ? ದ್ರಾಕ್ಷಾರಸದ ನಿಶೆ ನಿನ್ನನ್ನು ಬಿಟ್ಟುಹೋಗಲಿ,” ಎಂದನು.</verse>
				<verse number="15">ಆಕೆ, “ಇಲ್ಲ ಸ್ವಾಮಿ, ನಾನು ಕುಡಿದಿಲ್ಲ, ನಾನು ಬಹಳ ದುಃಖಪೀಡಿತಳು; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಸರ್ವೇಶ್ವರನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ.</verse>
				<verse number="16">ನಿಮ್ಮ ದಾಸಿಯಾದ ನನ್ನನ್ನು ಅಯೋಗ್ಯಳೆಂದು ನೆನಸಬೇಡಿ. ಈವರೆಗೂ ನನ್ನ ಅತಿಯಾದ ಚಿಂತೆಯನ್ನೂ ವ್ಯಥೆಯನ್ನೂ ಅರಿಕೆಮಾಡಿಕೊಳ್ಳುತ್ತಿದ್ದೆ,” ಎಂದು ಹೇಳಿದಳು.</verse>
				<verse number="17">ಆಗ ಏಲಿ ಆಕೆಗೆ, “ಸಮಾಧಾನದಿಂದ ಹೋಗು. ಇಸ್ರಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ಈಡೇರಿಸಲಿ,” ಎಂದನು.</verse>
				<verse number="18">“ನಿಮ್ಮ ದಾಸಿಯಾದ ನನ್ನ ಮೇಲೆ ಕರುಣೆಯಿರಲಿ,” ಎಂದು ಹೇಳಿ ಆಕೆ ಅಲ್ಲಿಂದ ಹೊರಟುಹೋಗಿ ಊಟಮಾಡಿದಳು. ಬಳಿಕ ಅವಳ ದುಃಖ ದೂರವಾಯಿತು.</verse>
				<verse number="19">ಮಾರನೆಯ ದಿನ ಬೆಳಿಗ್ಗೆ ಅವರೆಲ್ಲರು ಎದ್ದು ಸರ್ವೇಶ್ವರನನ್ನು ಆರಾಧಿಸಿ ರಾಮಾದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಲು ಆಕೆ ಸರ್ವೇಶ್ವರನ ಅನುಗ್ರಹದಿಂದ ಗರ್ಭಿಣಿ ಆದಳು.</verse>
				<verse number="20">ದಿನತುಂಬಿದ ಮೇಲೆ ಒಬ್ಬ ಮಗನನ್ನು ಹೆತ್ತಳು. “ನಾನು ಇವನನ್ನು ಸರ್ವೇಶ್ವರನಿಂದ ಬೇಡಿ ಪಡೆದೆ,” ಎಂದು ಹೇಳಿ ಆ ಮಗುವಿಗೆ ‘ಸಮುವೇಲ’ ಎಂದು ಹೆಸರಿಟ್ಟಳು.</verse>
				<verse number="21">ವಾಡಿಕೆಯ ಪ್ರಕಾರ ಎಲ್ಕಾನನು ಕುಟುಂಬ ಸಹಿತವಾಗಿ ಸರ್ವೇಶ್ವರನಿಗೆ ವಾರ್ಷಿಕ ಬಲಿಯನ್ನು ಅರ್ಪಿಸಲು ಹಾಗು ಹರಕೆಯನ್ನು ತೀರಿಸಲು ಶಿಲೋವಿಗೆ ಹೋಗಲು ಸಿದ್ಧನಾದ.</verse>
				<verse number="22">ಹನ್ನಳು, “ಮಗನು ಮೊಲೆಬಿಡುವವರೆಗೂ ನಾನು ಬರುವುದಿಲ್ಲ; ಅವನು ಸರ್ವೇಶ್ವರನ ಸನ್ನಿಧಿಯಲ್ಲಿ ಕಾಣಿಸಿಕೊಂಡು ಬಾಳಿನುದ್ದಕ್ಕೂ ಅಲ್ಲಿಯೇ ಇರುವ ಹಾಗೆ ಆಮೇಲೆ ತೆಗೆದುಕೊಂಡು ಬರುತ್ತೇನೆ,” ಎಂದು ಹೇಳಿದಳು.</verse>
				<verse number="23">ಗಂಡನಾದ ಎಲ್ಕಾನನು, “ಹಾಗೆಯೇ ಆಗಲಿ; ನಿನಗೆ ಸರಿತೋರಿದಂತೆ ಮಾಡು. ಮಗು ಮೊಲೆಬಿಡುವವರೆಗೆ ಮನೆಯಲ್ಲೇ ಇರು. ಸರ್ವೇಶ್ವರ ನಿನ್ನ ಮಾತನ್ನು ದೃಢವಾಗಿಸಲಿ,” ಎಂದನು. ಮಗು ಮೊಲೆಬಿಡುವ ತನಕ ಹನ್ನಳು ಮನೆಯಲ್ಲೇ ಇದ್ದು ಅವನನ್ನು ಆರೈಕೆ ಮಾಡಿದಳು.</verse>
				<verse number="24">ಅನಂತರ ಆಕೆ ಮಗನನ್ನು ಶಿಲೋವಿನಲ್ಲಿದ್ದ ಸರ್ವೇಶ್ವರನ ಮಂದಿರಕ್ಕೆ ತಂದಳು. ಅವನು ಇನ್ನೂ ಚಿಕ್ಕವನು ಆಗಿದ್ದನು. ಜೊತೆಗೆ ಅವರು ಮೂರು ವರ್ಷದ ಹೋರಿಯೊಂದನ್ನು, ಹತ್ತು ಕಿಲೋಗ್ರಾಂ ಹಿಟ್ಟನ್ನು ಹಾಗೂ ಒಂದು ತಿತ್ತಿ ದ್ರಾಕ್ಷಾರಸವನ್ನೂ ತಂದಿದ್ದರು.</verse>
				<verse number="25">ಆ ಹೋರಿಯನ್ನು ಬಲಿದಾನ ಮಾಡಿದ ಮೇಲೆ ಮಗುವನ್ನು ಏಲಿಯ ಬಳಿಗೆ ತರಲಾಯಿತು.</verse>
				<verse number="26">ಹನ್ನಳು ಏಲಿಗೆ, “ಸ್ವಾಮೀ, ನಿಮ್ಮ ಜೀವದಾಣೆ, ಹಿಂದೊಮ್ಮೆ ಸರ್ವೇಶ್ವರನ ಸನ್ನಿಧಿಯಲ್ಲಿ ಪ್ರಾರ್ಥನೆಮಾಡುತ್ತಾ ಇಲ್ಲಿ ನಿಮ್ಮ ಹತ್ತಿರ ನಿಂತಿದ್ದ ಮಹಿಳೆ ನಾನೇ.</verse>
				<verse number="27">ಸರ್ವೇಶ್ವರ ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ.</verse>
				<verse number="28">ಇವನನ್ನು ಸರ್ವೇಶ್ವರನಿಗೆ ಸಮರ್ಪಿಸಿಬಿಟ್ಟಿದ್ದೇನೆ. ಬದುಕಿರುವ ತನಕ ಇವನು ಅವರಿಗೇ ಪ್ರತಿಷ್ಠಿತನು,” ಎಂದು ಹೇಳಿದಳು. ಬಳಿಕ ಅವರು ಸರ್ವೇಶ್ವರಸ್ವಾಮಿಯನ್ನು ಆರಾಧಿಸಿದರು.</verse>
			</chapter>
			<chapter number="2">
				<verse number="1">ಹನ್ನಳು ಹೀಗೆಂದು ಭಜಿಸಿದಳು: “ಆನಂದಿಸುತ್ತಿದೆ ನನ್ನ ಮನ ಸರ್ವೇಶ್ವರನಲಿ ಉನ್ನತೋನ್ನತವಾಗಿದೆ ನನ್ನ ಶಕ್ತಿ ಆ ದೇವನಲಿ ನನಗಿದೆ ಶತ್ರುಗಳನ್ನೂ ಧಿಕ್ಕರಿಸುವ ಶಕ್ತಿ ನನಗಿತ್ತಿರುವನಾ ಸಂತಸದಾಯಕ ಮುಕ್ತಿ.</verse>
				<verse number="2">ಸರ್ವೇಶ್ವರನಂಥ ಪರಮಪಾವನನಿಲ್ಲ ನಿನ್ನ ಹೊರತು ದೇವಾ, ಬೇರೆ ದೇವನಿಲ್ಲ; ನಮ್ಮ ದೇವನಿಗೆ ಸಮನಾದ ಆಶ್ರಯದುರ್ಗವಿಲ್ಲ.</verse>
				<verse number="3">ಇನ್ನು ನಿಲ್ಲಲಿ ಗರ್ವದ ಮಾತು ಬಾಯಿಂದ ಬರದಿರಲಿ ಸೊಕ್ಕಿನ ಸೊಲ್ಲು; ಸರ್ವೇಶ್ವರನಾದ ದೇವನೇ ಸರ್ವಜ್ಞನು. ಮಾನವಕ್ರಿಯೆಗಳ ತೂಕ ನೋಡುವಾತನವನು.</verse>
				<verse number="4">ಮುರಿದು ಬಿದ್ದಿವೆ ಶೂರರ ಬಿಲ್ಲುಬಾಣಗಳು ದುರ್ಬಲರಾದರೋ ಶೌರ್ಯದ ನಡುಕಟ್ಟಿ ನಿಂತಿಹರು.</verse>
				<verse number="5">ಉಂಡು ಸುಖದಿಂದಿರುವರು ಹಸಿವುಗೊಂಡವರು ಹೊಟ್ಟೆಗಾಗಿ ಕೂಲಿಮಾಡುತ್ತಿಹರು ತೃಪ್ತರಿದ್ದವರು. ಬಂಜೆ ಹೆರುವಳು ಆರೇಳು ಮಕ್ಕಳನು ಒಬ್ಬಂಟಿಗಳಾಗಿರುವಳು ಮಕ್ಕಳಿವೆ ಎಂದವಳು.</verse>
				<verse number="6">ಜೀವಕೊಡುವವನು, ತೆಗೆದುಕೊಳ್ಳುವವನು ಆ ಸರ್ವೇಶ್ವರನೇ ಪಾತಾಳಕ್ಕಿಳಿಸುವವನು, ಮೇಲಕ್ಕೆಳೆದುಕೊಳ್ಳುವವನು ಆತನೇ.</verse>
				<verse number="7">ಬಡತನ, ಸಿರಿತನ ಕೊಡುವವನು ಆ ಸರ್ವೇಶ್ವರನೇ ತಗ್ಗಿಸುವವನು, ಹೆಚ್ಚಿಸುವವನು ಆತನೇ.</verse>
				<verse number="8">ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.</verse>
				<verse number="9">ಕಾಯುವನಾತ ತನ್ನ ಭಕ್ತರನು ಹೆಜ್ಜೆ ಹೆಜ್ಜೆಗು ದುರುಳರಾದರೋ ಮುಳುಗಿ ಮೌನ ತಾಳುವರು ಅಂಧಕಾರದೊಳು. ಕೇವಲ ಭುಜಬಲದಿಂದ ಜಯಹೊಂದಲಾರನು ನರಮಾನವನು!</verse>
				<verse number="10">ಚದರಿಹೋಗುವರು ಸರ್ವೇಶ್ವರನ ವಿರೋಧಿಗಳು ಆಗಸದಿಂದಾತ ಅವರ ವಿರುದ್ಧ ಗರ್ಜಿಸಲು! ನ್ಯಾಯ ತೀರಿಸುವನಾತ ಜಗದ ಕಟ್ಟಕಡೆಯವರೆಗೆ ಶಕ್ತಿಸಾಮರ್ಥ್ಯವನೀವನು ತಾ ನೇಮಿಸಿದರಸನಿಗೆ ಏರಿಸುವನು ತನ್ನಭಿಷಿಕ್ತನ ಒಲುಮೆಯನು ಉನ್ನತಿಗೆ.</verse>
				<verse number="11">ಎಲ್ಕಾನನು ರಾಮಾದಲ್ಲಿದ್ದ ತನ್ನ ಮನೆಗೆ ಹಿಂದಿರುಗಿದನು. ಹುಡುಗ ಸಮುವೇಲನು ಯಾಜಕ ಏಲಿಯನ ಕೈಕೆಳಗಿದ್ದು ಸರ್ವೇಶ್ವರನ ಸೇವೆಮಾಡುತ್ತಾ ಬಂದನು.</verse>
				<verse number="12">ಏಲಿಯ ಮಕ್ಕಳು ಮಹಾದುಷ್ಟರು. ಅವರು ಸರ್ವೇಶ್ವರನನ್ನು ಲಕ್ಷಿಸುತ್ತಿರಲಿಲ್ಲ.</verse>
				<verse number="13">ಬಲಿಯರ್ಪಿಸುವುದಕ್ಕೆ ಬಂದ ಜನರಲ್ಲೂ ಯಾಜಕರಾದ ಇವರು ಸರಿಯಾಗಿ ವರ್ತಿಸುತ್ತಿರಲಿಲ್ಲ; ಬಲಿಮಾಂಸ ಬೇಯುತ್ತಿರುವಾಗಲೇ ಯಾಜಕನ ಆಳು ಕೈಯಲ್ಲಿ ತ್ರಿಶೂಲ ಹಿಡಿದು ಬರುತ್ತಿದ್ದನು.</verse>
				<verse number="14">ಅದನ್ನು ಮಾಂಸ ಬೇಯುತ್ತಿದ್ದ ಕೊಪ್ಪರಿಗೆಯಲ್ಲಾಗಲಿ, ಭಾಂಡದಲ್ಲಾಗಲಿ, ತಪ್ಪಲೆಯಲ್ಲಾಗಲಿ, ಗಡಿಗೆಯಲ್ಲಾಗಲಿ ಚುಚ್ಚಿ ಅದಕ್ಕೆ ಸಿಕ್ಕಿದೆಲ್ಲವನ್ನು ಯಾಜಕನಿಗೆಂದು ಹೇಳಿ ತೆಗೆದುಕೊಳ್ಳುತ್ತಿದ್ದನು. ಶಿಲೋವಿಗೆ ಬರುವ ಇಸ್ರಯೇಲರೆಲ್ಲರಿಗು ಹೀಗೆಯೇ ಮಾಡುತ್ತಿದ್ದರು.</verse>
				<verse number="15">ಇದಲ್ಲದೆ, ಕೊಬ್ಬನ್ನು ಹೋಮಮಾಡುವುದಕ್ಕೆ ಮುಂಚೆಯೇ ಯಾಜಕನ ಆಳು ಬಂದು ಬಲಿಯರ್ಪಿಸುತ್ತಿದ್ದವನಿಗೆ, “ಹುರಿಯತಕ್ಕ ಮಾಂಸವನ್ನು ಯಾಜಕನಿಗೆ ಕೊಡು; ನೀವು ಬೇಯಿಸಿದ ಮಾಂಸವನ್ನು ಅವರು ತೆಗೆದುಕೊಳ್ಳುವುದಿಲ್ಲ; ಅವರಿಗೆ ಹಸಿ ಮಾಂಸವೇ ಬೇಕು,” ಎನ್ನುತ್ತಿದ್ದನು.</verse>
				<verse number="16">ಬಲಿಯರ್ಪಿಸುತ್ತಿದ್ದವನು ಅವನಿಗೆ, “ಮೊದಲು ಕೊಬ್ಬನ್ನು ಹೋಮಮಾಡೋಣ; ಅನಂತರ ನಿನಗೆ ಬೇಕಾದುದನ್ನು ತೆಗೆದುಕೊಳ್ಳುವಿಯಂತೆ,” ಎಂದು ಹೇಳಿದಾಗ, “ಕೂಡದು, ಈಗಲೇ ಬೇಕು; ಇಲ್ಲವಾದರೆ ಬಲಾತ್ಕಾರದಿಂದ ತೆಗೆದುಕೊಳ್ಳುತ್ತೇನೆ,” ಎಂದು ಪೀಡಿಸುತ್ತಿದ್ದನು.</verse>
				<verse number="17">ಹೀಗೆ ಸರ್ವೇಶ್ವರನ ನೈವೇದ್ಯವನ್ನು ತುಚ್ಛವಾಗಿ ಕಾಣುತ್ತಿದ್ದುದರಿಂದ ದೇವರ ದೃಷ್ಟಿಯಲ್ಲಿ ಏಲಿಯ ಮಕ್ಕಳ ಪಾಪ ಘೋರವಾಗಿತ್ತು.</verse>
				<verse number="18">ಬಾಲಕನಾದ ಸಮುವೇಲನು ‘ಏಫೋದ’ ಎಂಬ ಪ್ರತ್ಯೇಕ ಮಡಿಯಂಗಿಯನ್ನು ತೊಟ್ಟುಕೊಂಡು ಸರ್ವೇಶ್ವರನ ಸಾನ್ನಿಧ್ಯಸೇವೆಯನ್ನು ಮಾಡುತ್ತಿದ್ದನು.</verse>
				<verse number="19">ಅವನ ತಾಯಿ ಪ್ರತಿವರ್ಷ ಗಂಡನ ಜೊತೆಯಲ್ಲಿ ಬಲಿಯನ್ನು ಅರ್ಪಿಸುವುದಕ್ಕೆ ಬಂದಾಗ ಒಂದು ಚಿಕ್ಕ ನಿಲುವಂಗಿಯನ್ನು ಹೊಲಿದು ಅವನಿಗೆ ತಂದುಕೊಡುತ್ತಿದ್ದಳು.</verse>
				<verse number="20">ಎಲ್ಕಾನನಿಗೆ ಏಲಿ, “ನೀನು ಸರ್ವೇಶ್ವರನಿಗೆ ಸಮರ್ಪಿಸಿಬಿಟ್ಟ ಈ ಮಗನಿಗೆ ಬದಲಾಗಿ ಈ ಹನ್ನಳಿಂದ ನಿನಗೆ ಬೇರೆ ಮಕ್ಕಳಾಗಲಿ!” ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ಸ್ವಗ್ರಾಮಕ್ಕೆ ಹಿಂದಿರುಗುತ್ತಿದ್ದರು.</verse>
				<verse number="21">ಸರ್ವೇಶ್ವರನ ಅನುಗ್ರಹ ಹನ್ನಳಿಗೆ ಲಭಿಸಿತು. ಆಕೆಗೆ ಮೂರು ಗಂಡು, ಇಬ್ಬರು ಹೆಣ್ಣು ಮಕ್ಕಳಾದುವು. ಬಾಲಕ ಸಮುವೇಲನು ಸರ್ವೇಶ್ವರನ ಸನ್ನಿಧಿಯಲ್ಲಿ ಬೆಳೆದು ದೊಡ್ಡವನಾದನು.</verse>
				<verse number="22">ಈಗ ಏಲಿ ಬಹಳ ಮುದುಕನಾಗಿದ್ದ. ತನ್ನ ಮಕ್ಕಳು ಇಸ್ರಯೇಲ್ ಜನರಿಗೆ ಮಾಡುತ್ತಿದ್ದುದೆಲ್ಲಾ ಅವನ ಕಿವಿಗೆ ಬೀಳುತ್ತಿತ್ತು. ದೇವದರ್ಶನದ ಗುಡಾರದ ಬಾಗಿಲಿನಲ್ಲಿ ಕೆಲಸಮಾಡುತ್ತಿದ್ದ ಸ್ತ್ರೀಯರೊಡನೆ ಮಲಗುತ್ತಿದ್ದಾರೆಂಬುದನ್ನೂ ಕೇಳಿದ್ದ.</verse>
				<verse number="23">ಆದುದರಿಂದ ಅವರಿಗೆ, “ಜನರೆಲ್ಲರು ನಿಮ್ಮ ದುಷ್ಕೃತ್ಯಗಳ ಬಗ್ಗೆ ದೂರುವುದನ್ನು ಕೇಳಿದ್ದೇನೆ. ಹೀಗೇಕೆ ಮಾಡುತ್ತೀರಿ?</verse>
				<verse number="24">ಮಕ್ಕಳೇ, ಹೀಗೆ ಮಾಡಬಾರದು. ನೀವು ಸರ್ವೇಶ್ವರನ ಜನರನ್ನು ದುರ್ಮಾರ್ಗಕ್ಕೆ ಎಳೆಯುತ್ತಿದ್ದೀರೆಂದು ಕೇಳಿದ್ದೇನೆ. ಇದು ಸರಿಯಲ್ಲ.</verse>
				<verse number="25">ಮನುಷ್ಯನು ಮನುಷ್ಯನಿಗೆ ವಿರುದ್ಧ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುತ್ತಾರೆ. ಆದರೆ ಮನುಷ್ಯನು ಸರ್ವೇಶ್ವರನಿಗೆ ವಿರುದ್ಧ ಅಪರಾಧ ಮಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?” ಎಂದು ಎಚ್ಚರಿಸಿದನು. ಆದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಎಂದೇ ಅವರನ್ನು ಕೊಲ್ಲಬೇಕೆಂಬುದು ಸರ್ವೇಶ್ವರನ ಚಿತ್ತವಾಗಿತ್ತು.</verse>
				<verse number="26">ಬಾಲಕ ಸಮುವೇಲ ಈ ಮಧ್ಯೆ ಬೆಳೆಯುತ್ತಾ ಸರ್ವೇಶ್ವರನ ಹಾಗು ಮಾನವರ ಪ್ರೀತಿಗೆ ಪಾತ್ರನಾಗುತ್ತಿದ್ದನು.</verse>
				<verse number="27">ಒಂದು ದಿನ ದೇವಭಕ್ತನೊಬ್ಬನು ಏಲಿಯ ಬಳಿಗೆ ಬಂದು, ಸರ್ವೇಶ್ವರನಿಂದ ಬಂದ ಈ ಸಮಾಚಾರವನ್ನು ತಿಳಿಸಿದನು: “ಇಸ್ರಯೇಲರು ಈಜಿಪ್ಟಿನಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾದೆ;</verse>
				<verse number="28">ಇಸ್ರಯೇಲರ ಕುಟುಂಬಗಳಲ್ಲೆಲ್ಲಾ ಅವರನ್ನೇ, ಯಾಜಕ ಸೇವಾವೃತ್ತಿಗೆ ಆರಿಸಿಕೊಂಡೆ: ಅಂದರೆ, ಬಲಿಯರ್ಪಿಸುವುದಕ್ಕೆ, ಧೂಪಾರತಿ ಎತ್ತುವುದಕ್ಕೆ ಹಾಗು ‘ಏಫೋದ’ನ್ನು ಧರಿಸಿಕೊಳ್ಳುವುದಕ್ಕೆ ಆರಿಸಿಕೊಂಡೆ; ಇಸ್ರಯೇಲರು ಅರ್ಪಿಸುವ ಬಲಿಶೇಷದ ಹಕ್ಕನ್ನೂ ಅವರಿಗೆ ಅನುಗ್ರಹಿಸಿದೆ.</verse>
				<verse number="29">ಆದರೆ ನನ್ನ ಪ್ರಜೆ ಇಸ್ರಯೇಲರು ನನ್ನ ಆಜ್ಞಾನುಸಾರ ನನ್ನ ಮಂದಿರಕ್ಕೆ ತರುವ ಬಲಿದಾನಗಳ ಹಾಗು ನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿದ್ದೀರಿ. ಅವುಗಳ ಶ್ರೇಷ್ಠಭಾಗಗಳಿಂದ ನಿಮ್ಮನ್ನೇ ಕೊಬ್ಬಿಸಿಕೊಳ್ಳುತ್ತಿದ್ದೀರಿ; ಏಕೆ? ನೀನು ನನ್ನನ್ನು ಗೌರವಿಸುವುದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವುದು ಸರಿಯೇ?</verse>
				<verse number="30">ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.</verse>
				<verse number="31">ನಿನ್ನ ಮತ್ತು ನಿನ್ನ ಮನೆಯವರ ಭುಜಬಲವನ್ನು ಮುರಿಯುವ ದಿನಗಳು ಬರಲಿವೆ. ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟುವುದಿಲ್ಲ.</verse>
				<verse number="32">ನಿನ್ನ ವೈರಿಯೇ ನನ್ನ ಮಂದಿರದಲ್ಲಿ ಸೇವೆಮಾಡುವುದನ್ನು ನೀನು ನೋಡುವೆ. ಇಸ್ರಯೇಲರಿಗೆ ಸರ್ವಶುಭವನ್ನು ದಯಪಾಲಿಸುವೆನು; ಆದರೆ ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟುವುದೇ ಇಲ್ಲ.</verse>
				<verse number="33">ನನ್ನ ಸಾನ್ನಿಧ್ಯ ಸೇವೆಯಿಂದ ನಿಮ್ಮಲ್ಲಿ ಒಬ್ಬನನ್ನು ಉಳಿಸಿ ಮಿಕ್ಕವರನ್ನು ತೆಗೆದುಹಾಕುವೆನು. ಉಳಿಸಲಾದವನು ಕೂಡ ಕುರುಡನಾಗಿ ನಿನ್ನ ವ್ಯಥೆಗೆ ಕಾರಣನಾಗುವನು. ನಿನ್ನ ಸಂತಾನದವರೆಲ್ಲರು ಕತ್ತಿಯಿಂದ ಸಾಯುವರು.</verse>
				<verse number="34">ಇದೆಲ್ಲಾ ನೆರವೇರುವುದು ಎಂಬುದಕ್ಕೆ ಗುರುತಾಗಿ ನಿನ್ನ ಮಕ್ಕಳಾದ ಹೊಫ್ನಿ ಹಾಗು ಫೀನೆಹಾಸ್ ಒಂದೇ ದಿನದಲ್ಲಿ ಸಾಯುವರು.</verse>
				<verse number="35">ನನ್ನ ಹೃನ್ಮನಗಳಿಗೆ ಸರಿಯಾದುದನ್ನೇ ಮಾಡುವ ಒಬ್ಬ ಶ್ರದ್ಧೆಯುಳ್ಳ ಯಾಜಕನನ್ನು ಎಬ್ಬಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.</verse>
				<verse number="36">ನಿನ್ನ ಮನೆಯಲ್ಲಿ ಅಳಿದು ಉಳಿದವರು ಬಂದು ಅವನ ಮುಂದೆ ಅಡ್ಡಬೀಳುವರು; ‘ನಮಗೊಂದು ಬೆಳ್ಳಿಕಾಸನ್ನಾದರೂ ರೊಟ್ಟಿ ಚೂರನ್ನಾದರೂ ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ದೇವಸ್ಥಾನದ ಸೇವೆಯಲ್ಲಿ ಯಾವುದಕ್ಕಾದರು ನಮ್ಮನ್ನು ಸೇರಿಸಿಕೋ’ ಎಂದು ಬೇಡಿಕೊಳ್ಳುವರು\.</verse>
			</chapter>
			<chapter number="3">
				<verse number="1">ಬಾಲಕ ಸಮುವೇಲನು ಏಲಿಯ ನೇತೃತ್ವದಲ್ಲಿ ಸರ್ವೇಶ್ವರನ ಸೇವೆಮಾಡುತ್ತಾ ಬಂದನು. ಆ ಕಾಲದಲ್ಲಿ ದೇವೋಕ್ತಿಗಳು ವಿರಳ ಆಗಿದ್ದವು; ದೇವದರ್ಶನಗಳು ಅಪರೂಪವಾಗಿಬಿಟ್ಟಿದ್ದವು.</verse>
				<verse number="2">ಏಲಿಯ ಕಣ್ಣುಗಳು ದಿನದಿನಕ್ಕೂ ಮೊಬ್ಬಾಗುತ್ತಾ ಬಂದು ಕುರುಡನಂಥಾಗಿಬಿಟ್ಟಿದ್ದನು. ಒಂದು ರಾತ್ರಿ ಅವನು ತನ್ನ ಕೋಣೆಯಲ್ಲಿ ಮಲಗಿದ್ದನು.</verse>
				<verse number="3">ಸಮುವೇಲನು ಸರ್ವೇಶ್ವರನ ಮಂದಿರದಲ್ಲಿ, ದೇವರ ಮಂಜೂಷವಿದ್ದ ಸ್ಥಳದಲ್ಲಿ ಮಲಗಿದ್ದನು. ದೇವರ ದೀಪ ಇನ್ನೂ ಉರಿಯುತ್ತಿತ್ತು.</verse>
				<verse number="4">ಆಗ ಸರ್ವೇಶ್ವರಸ್ವಾಮಿ ಸಮುವೇಲನನ್ನು ಕರೆದರು. ಸಮುವೇಲನು, “ಇಗೋ ಬಂದೇ,” ಎಂದು ಉತ್ತರಕೊಟ್ಟು,</verse>
				<verse number="5">ಒಡನೆ ಏಲಿಯ ಬಳಿಗೆ ಹೋಗಿ, “ಇಗೋ ಬಂದಿದ್ದೇನೆ; ನೀವು ನನ್ನನ್ನು ಕರೆದಿರಲ್ಲವೆ?” ಎಂದನು. ಏಲಿ, “ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ,” ಎಂದನು. ಸಮುವೇಲನು ಹೋಗಿ ಮಲಗಿದನು.</verse>
				<verse number="6">ಸರ್ವೇಶ್ವರ ಪುನಃ, “ಸಮುವೇಲನೇ,” ಎಂದು ಕರೆದರು. ಸಮುವೇಲನು ಕೂಡಲೆ ಎದ್ದು ಏಲಿಯ ಬಳಿಗೆ ಹೋಗಿ, “ಇಗೋ ಬಂದಿದ್ದೇನೆ; ನೀವು ನನ್ನನ್ನು ಕರೆದಿರಲ್ಲವೆ?” ಎಂದನು. ಅವನು, “ಮಗನೇ, ನಾನು ನಿನ್ನನ್ನು ಕರೆಯಲಿಲ್ಲ; ಹೋಗಿ ಮಲಗಿಕೋ,” ಎಂದನು.</verse>
				<verse number="7">ಈವರೆಗೂ ಸಮುವೇಲನಿಗೆ ಸರ್ವೇಶ್ವರನ ನೇರ ಅನುಭವ ಆಗಿರಲಿಲ್ಲ. ದೇವರ ವಾಣಿ ಅವನಿಗೆ ಕೇಳಿಸಿರಲಿಲ್ಲ.</verse>
				<verse number="8">ಸರ್ವೇಶ್ವರ ಸಮುವೇಲನನ್ನು ಮೂರನೆಯ ಸಾರಿ ಕರೆದರು. ಅವನು ತಟ್ಟನೆ ಏಲಿಯ ಹತ್ತಿರ ಓಡಿ, “ಇಗೋ, ಬಂದಿದ್ದೇನೆ, ನನ್ನನ್ನು ಕರೆದಿರಲ್ಲಾ,” ಎಂದನು. ಹುಡುಗನನ್ನು ಕರೆದವರು ಸರ್ವೇಶ್ವರನೇ ಎಂದು ಏಲಿಗೆ ತಿಳಿಯಿತು.</verse>
				<verse number="9">ಅವನು ಸಮುವೇಲನಿಗೆ, “ಹೋಗಿ ಮಲಗಿಕೋ; ಮತ್ತೆ ಅವರು ನಿನ್ನನ್ನು ಕರೆದರೆ, ‘ಸರ್ವೇಶ್ವರಾ, ಅಪ್ಪಣೆಯಾಗಲಿ; ತಮ್ಮ ದಾಸ ಕಾದಿದ್ದಾನೆ,’ ಎಂದು ಹೇಳು,” ಎಂದನು. ಸಮುವೇಲನು ಹಿಂದಿರುಗಿ ಹೋಗಿ ತನ್ನ ಸ್ಥಳದಲ್ಲೇ ಮಲಗಿಕೊಂಡನು.</verse>
				<verse number="10">ಸರ್ವೇಶ್ವರ ಪ್ರತ್ಯಕ್ಷರಾಗಿ ಹಿಂದಿನಂತೆಯೇ, “ಸಮುವೇಲನೇ, ಸಮುವೇಲನೇ,” ಎಂದರು. ಸಮುವೇಲನು, “ಅಪ್ಪಣೆಯಾಗಲಿ, ತಮ್ಮ ದಾಸನಾದ ನಾನು ಕಾದಿದ್ದೇನೆ,” ಎಂದನು.</verse>
				<verse number="11">ಆಗ ಸರ್ವೇಶ್ವರ ಸಮುವೇಲನಿಗೆ, “ನಾನು ಇಸ್ರಯೇಲರಲ್ಲಿ ಒಂದು ವಿಶೇಷಕಾರ್ಯವನ್ನು ನಡಿಸುವೆನು. ಈ ವಿಷಯವನ್ನು ಕೇಳುವವರ ಕಿವಿಗಳೆರಡೂ ನಿಮಿರುವುವು!</verse>
				<verse number="12">ಏಲಿಯ ಮನೆಯನ್ನು ಕುರಿತು ತಿಳಿಸಿದ್ದೆಲ್ಲವನ್ನೂ ಆ ದಿನ ತಪ್ಪದೆ ನೆರವೇರಿಸುವೆನು.</verse>
				<verse number="13">ತನ್ನ ಮಕ್ಕಳು ದೇವದೂಷಕರು ಎಂದು ಅವನಿಗೆ ತಿಳಿದುಬಂದರೂ ಅವನು ಅವರನ್ನು ತಿದ್ದಲಿಲ್ಲ. ಈ ಪಾಪದ ನಿಮಿತ್ತ ಅವನ ಕುಟುಂಬವನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.</verse>
				<verse number="14">ಏಲಿಯ ಮನೆಯವರ ಅಪರಾಧವು ಎಂದಿಗೂ ಬಲಿಯಿಂದಾಗಲಿ ನೈವೇದ್ಯಗಳಿಂದಾಗಲಿ ಪರಿಹಾರವಾಗುವುದಿಲ್ಲವೆಂದು ಪ್ರಮಾಣಮಾಡಿದ್ದೇನೆ,” ಎಂದು ಹೇಳಿದರು.</verse>
				<verse number="15">ಅನಂತರ ಸಮುವೇಲನು ಮಲಗಿ, ಮುಂಜಾನೆಯಲ್ಲೇ ಎದ್ದು, ಸರ್ವೇಶ್ವರನ ಮಂದಿರದ ಬಾಗಿಲುಗಳನ್ನು ತೆರೆದನು. ತಾನು ಕಂಡದ್ದನ್ನು ಏಲಿಗೆ ತಿಳಿಸಲು ಭಯಪಟ್ಟನು.</verse>
				<verse number="16">ಆದರೆ, ಏಲಿ, “ಮಗನೇ, ಸಮುವೇಲನೇ”, ಎಂದು ಕರೆದಾಗ ಅವನು, “ಇಗೋ, ಇದ್ದೇನೆ,” ಎಂದನು.</verse>
				<verse number="17">ಏಲಿ ಅವನಿಗೆ, “ಸರ್ವೇಶ್ವರ ನಿನಗೆ ತಿಳಿಸಿದ್ದೇನು? ಅವರ ಮಾತುಗಳಲ್ಲಿ ಒಂದನ್ನಾದರೂ ಮರೆಮಾಡಬೇಡ; ಮಾಡಿದೆಯಾದರೆ ಸರ್ವೇಶ್ವರ ಇಷ್ಟಬಂದ ಹಾಗೆ ನಿನ್ನನ್ನು ದಂಡಿಸಲಿ,” ಎಂದು ಹೇಳಿದನು.</verse>
				<verse number="18">ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನೂ ತಿಳಿಸಿದನು. ಏಲಿ ಅದನ್ನು ಕೇಳಿ, “ಅವರೇ ಸರ್ವೇಶ್ವರ. ತಮಗೆ ಸರಿಕಂಡಂತೆ ಮಾಡಲಿ,” ಎಂದನು.</verse>
				<verse number="19">ಸಮುವೇಲನು ದೊಡ್ಡವನಾಗುತ್ತಾ ಬಂದನು. ಸರ್ವೇಶ್ವರ ಅವನೊಡನೆ ಇದ್ದರು. ಆದುದರಿಂದಲೆ ಅವನು ಪ್ರವಾದನೆ ಮಾಡಿದವುಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.</verse>
				<verse number="20">ಸರ್ವೇಶ್ವರ ಅವನನ್ನು ತಮ್ಮ ಪ್ರವಾದಿಯನ್ನಾಗಿ ನೇಮಿಸಿಕೊಂಡರು. ಈ ಸಂಗತಿ ದಾನ್ ಊರಿನಿಂದ ಬೇರ್ಷೆಬದವರೆಗಿದ್ದ ಎಲ್ಲ ಇಸ್ರಯೇಲರಿಗೆ ತಿಳಿಯಿತು.</verse>
				<verse number="21">ಸರ್ವೇಶ್ವರ, ಶಿಲೋವಿನಲ್ಲಿ ದರ್ಶನಕೊಡುವುದಕ್ಕೆ ಪ್ರಾರಂಭಿಸಿ ದೈವವಾಣಿಯ ಮೂಲಕ ಸಮುವೇಲನಿಗೆ ತಮ್ಮನ್ನೇ ಶೃತಪಡಿಸುತ್ತಾ ಬಂದರು. ಇಸ್ರಯೇಲರೆಲ್ಲರಿಗೆ ಸಮುವೇಲನು ಸರ್ವೇಶ್ವರನ ವಚನಗಳನ್ನು ತಿಳಿಸುತ್ತಾ ಇದ್ದನು.</verse>
			</chapter>
			<chapter number="4">
				<verse number="1">ಇಸ್ರಯೇಲರು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೊರಟು ಎಬೆನೆಜೆರಿನ ಸಮೀಪದಲ್ಲಿ ಪಾಳೆಯ ಮಾಡಿಕೊಂಡರು. ಫಿಲಿಷ್ಟಿಯರು ಬಂದು ಅಫೇಕಿನಲ್ಲಿ ಇಳಿದುಕೊಂಡರು.</verse>
				<verse number="2">ಇವರು ಇಸ್ರಯೇಲರಿಗೆ ಎದುರಾಗಿ ವ್ಯೂಹಕಟ್ಟಿ ಯುದ್ಧಮಾಡಿದರು. ಇಸ್ರಯೇಲರು ಸೋತರು. ರಣರಂಗದಲ್ಲಿ ಸುಮಾರು ನಾಲ್ಕು ಸಾವಿರಮಂದಿ ಇಸ್ರಯೇಲರನ್ನು ಫಿಲಿಷ್ಟಿಯರು ಸಂಹರಿಸಿದರು.</verse>
				<verse number="3">ಇಸ್ರಯೇಲರು ತಮ್ಮ ಪಾಳೆಯಕ್ಕೆ ಹಿಂದಿರುಗಿದ ಮೇಲೆ ಅವರೊಡನೆ ಅವರ ಹಿರಿಯರು, “ಸರ್ವೇಶ್ವರ ಈ ದಿನ ನಮ್ಮನ್ನು ಫಿಲಿಷ್ಟಿಯರಿಂದ ಅಪಜಯಪಡಿಸಿದ್ದೇಕೆ? ಶಿಲೋವಿನಿಂದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ತರೋಣ; ಅವರು ನಮ್ಮ ಮಧ್ಯದಲ್ಲಿ ಬಂದು ಶತ್ರುಗಳ ಕೈಯಿಂದ ನಮ್ಮನ್ನು ರಕ್ಷಿಸಲಿ,” ಎಂದು ಸಮಾಲೋಚಿಸಿದರು.</verse>
				<verse number="4">ಅಂತೆಯೇ ಜನರನ್ನು ಕಳುಹಿಸಿ ಕೆರೂಬಿಗಳ ಮಧ್ಯದಲ್ಲಿ ಆಸೀನರಾಗಿರುವ ಸೇನಾಧೀಶ್ವರನ ಒಡಂಬಡಿಕೆಯ ಮಂಜೂಷವನ್ನು ತರಿಸಿದರು. ಏಲಿಯ ಇಬ್ಬರು ಮಕ್ಕಳಾದ ಹೊಫ್ನಿ, ಫೀನೆಹಾಸ ಎಂಬವರು ದೇವರ ಒಡಂಬಡಿಕೆಯ ಮಂಜೂಷದ ಸಂಗಡ ಇದ್ದರು.</verse>
				<verse number="5">ಸರ್ವೇಶ್ವರನ ಒಡಂಬಡಿಕೆಯ ಮಂಜೂಷ ಪಾಳೆಯಕ್ಕೆ ಬಂದಾಗ ಇಸ್ರಯೇಲರೆಲ್ಲರೂ ಭೂಮಿ ಬಿರಿಯುವಷ್ಟು ಗಟ್ಟಿಯಾಗಿ ಜಯಕಾರ ಮಾಡಿದರು.</verse>
				<verse number="6">ಫಿಲಿಷ್ಟಿಯರು ಇದನ್ನು ಕೇಳಿ, “ಹಿಬ್ರಿಯರ ಪಾಳೆಯದಲ್ಲಿ ಇಂಥ ಆರ್ಭಟಕ್ಕೆ ಏನು ಕಾರಣ?” ಎಂದು ವಿಚಾರಿಸಿದರು. ಸರ್ವೇಶ್ವರನ ಮಂಜೂಷವು ಪಾಳೆಯಕ್ಕೆ ಬಂದದ್ದೇ ಕಾರಣವೆಂದು ಗೊತ್ತಾಯಿತು.</verse>
				<verse number="7">“ದೇವರು ಇವರ ಪಾಳೆಯಕ್ಕೆ ಬಂದಿದ್ದಾರಂತೆ!” ಎಂದುಕೊಂಡು ಫಿಲಿಷ್ಟಿಯರು ಬಹಳವಾಗಿ ಭಯಪಟ್ಟರು. “ಅಯ್ಯೋ, ಹಿಂದೆ ಹೀಗಿರಲಿಲ್ಲ.</verse>
				<verse number="8">ಅಕಟಾ, ಪ್ರತಾಪವುಳ್ಳ ಈ ದೇವರುಗಳ ಕೈಯಿಂದ ನಮ್ಮನ್ನು ಬಿಡಿಸುವವರಾರು? ಈಜಿಪ್ಟರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೆ?</verse>
				<verse number="9">ಫಿಲಿಷ್ಟಿಯರೇ, ಧೈರ್ಯಗೊಳ್ಳಿ; ಶೂರರಾಗಿರಿ! ಇಲ್ಲವಾದರೆ ನಿಮಗೆ ಗುಲಾಮರಾಗಿದ್ದ ಹಿಬ್ರಿಯರಿಗೆ ನೀವೇ ಗುಲಾಮರಾದೀರಿ; ಆದಕಾರಣ ಶೌರ್ಯದಿಂದ ಯುದ್ಧಮಾಡಿ!” ಎಂದು ಹೇಳಿಕೊಂಡು ಯುದ್ಧಮಾಡಿದರು.</verse>
				<verse number="10">ಇಸ್ರಯೇಲರು ಸೋತು ತಮ್ಮ ತಮ್ಮ ಮನೆಗಳಿಗೆ ಓಡಿಹೋದರು. ಮಹಾ ಸಂಹಾರವಾಯಿತು; ಇಸ್ರಯೇಲರಲ್ಲಿ ಮೂವತ್ತು ಸಾವಿರ ಕಾಲಾಳುಗಳು ಮಡಿದರು.</verse>
				<verse number="11">ದೇವರ ಮಂಜೂಷ ಶತ್ರುವಶವಾಯಿತು. ಏಲಿಯ ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸ ಹತರಾದರು.</verse>
				<verse number="12">ಅದೇ ದಿನ ಒಬ್ಬ ಬೆನ್ಯಾಮೀನ್ಯನು ರಣರಂಗದಿಂದ ತಪ್ಪಿಸಿಕೊಂಡು, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು,</verse>
				<verse number="13">ಶಿಲೋವಿಗೆ ಬಂದು, ನಡೆದದ್ದನ್ನು ತಿಳಿಸಿದನು. ಜನರೆಲ್ಲರು ಗೋಳಾಡತೊಡಗಿದರು. ‘ದೇವರ ಮಂಜೂಷ ಏನಾಯಿತೋ?’ ಎಂಬ ಚಿಂತೆಯಿಂದ ಮಂದಿರ ದ್ವಾರದ ಬಳಿ ಕುಳಿತು, ದಾರಿಯನ್ನೇ ನೋಡುತ್ತಿದ್ದ ಏಲಿ, ದುಃಖಧ್ವನಿಯನ್ನು ಕೇಳಿದನು.</verse>
				<verse number="14">ಈ ಗದ್ದಲವೇನೆಂದು ವಿಚಾರಿಸಿದನು. ಒಡನೆ ಆ ವ್ಯಕ್ತಿ ಏಲಿಯ ಬಳಿಗೆ ಬಂದು ಎಲ್ಲವನ್ನು ತಿಳಿಸಿದನು.</verse>
				<verse number="15">ಏಲಿ ಆಗ ತೊಂಬತ್ತೆಂಟು ವರ್ಷದವನು; ಕಣ್ಣುಗಳು ಇಂಗಿಹೋಗಿ ಕುರುಡನಾಗಿದ್ದನು.</verse>
				<verse number="16">ಆ ವ್ಯಕ್ತಿ ಏಲಿಗೆ, “ನಾನು ರಣರಂಗದಲ್ಲಿ ಇದ್ದವನು; ಈಹೊತ್ತೇ ಅಲ್ಲಿಂದ ಓಡಿಬಂದೆ,” ಎನ್ನಲು ಏಲಿ, “ಮಗು, ಏನು ಸುದ್ದಿ?” ಎಂದು ಕೇಳಿದನು.</verse>
				<verse number="17">ಅವನು ಏಲಿಗೆ, “ಇಸ್ರಯೇಲರು ಫಿಲಿಷ್ಟಿಯರಿಗೆ ಬೆನ್ನುತೋರಿಸಿದರು; ಮಹಾ ಸಂಹಾರವಾಯಿತು. ನಿಮ್ಮ ಇಬ್ಬರು ಮಕ್ಕಳಾದ ಹೊಫ್ನಿ ಹಾಗು ಫೀನೆಹಾಸ ಸತ್ತರು; ದೇವರ ಮಂಜೂಷವು ಶತ್ರುವಶವಾಯಿತು,” ಎಂದು ತಿಳಿಸಿದನು.</verse>
				<verse number="18">ಮುದುಕನೂ ಸ್ಥೂಲಕಾಯನೂ ಆದ ಏಲಿ ದೇವರ ಒಡಂಬಡಿಕೆಯ ಮಂಜೂಷದ ವರ್ತಮಾನವನ್ನು ಕೇಳಿದ್ದೇ, ಪೀಠದಿಂದ ಹಿಂದಕ್ಕೆ, ಬಾಗಿಲಿನ ಕಡೆಗೆ ಬಿದ್ದು, ಕುತ್ತಿಗೆ ಮುರಿದು ಸತ್ತನು. ಏಲಿ ಇಸ್ರಯೇಲರನ್ನು ನಾಲ್ವತ್ತು ವರ್ಷ ಪಾಲಿಸಿದ್ದನು.</verse>
				<verse number="19">ಫೀನೆಹಾಸನ ಹೆಂಡತಿಯಾದ ಏಲಿಯ ಸೊಸೆ ದಿನತುಂಬಿದ ಗರ್ಭಿಣಿ. ದೇವರ ಮಂಜೂಷ ಶತ್ರುವಶವಾದದ್ದನ್ನು ಕೇಳಿದೊಡನೆ ಪ್ರಸವವೇದನೆಯುಂಟಾಗಿ ಮಗುವನ್ನು ಹೆತ್ತಳು.</verse>
				<verse number="20">ಆಕೆ ಸಾಯುವ ಸಮಯದಲ್ಲಿ ಬಳಿಯಲ್ಲಿ ನಿಂತಿದ್ದ ಮಹಿಳೆಯರು, “ಭಯಪಡಬೇಡ, ಮಗನನ್ನು ಹೆತ್ತಿದ್ದೀ,” ಎಂದು ಹೇಳಿದರು. ಆಕೆ ಅವರ ಮಾತಿಗೆ ಲಕ್ಷ್ಯಕೊಡಲಿಲ್ಲ. ಪ್ರತ್ಯುತ್ತರವನ್ನೂ ಕೊಡಲಿಲ್ಲ.</verse>
				<verse number="21">ದೇವರ ಮಂಜೂಷ ಶತ್ರುವಶವಾದುದರಿಂದಲು ಹಾಗೂ ಮಾವನೂ ಗಂಡನೂ ಮೃತರಾಗಿದ್ದರಿಂದಲು, “ದೈವಮಹಿಮೆಯು ಇಸ್ರಯೇಲರನ್ನು ಬಿಟ್ಟುಹೋಯಿತು,” ಎಂದು ಹೇಳಿ ಆ ಕೂಸಿಗೆ ‘ಈಕಾಬೋದ್’ ಎಂದು ಹೆಸರು ಇಟ್ಟಳು.</verse>
				<verse number="22">ದೇವರ ಮಂಜೂಷ ಶತ್ರುವಶವಾದ್ದರಿಂದಲೇ ಇಸ್ರಯೇಲರ ಮಹಿಮೆ ಮಾಯವಾಯಿತೆಂದು ಹೇಳಿದಳು.</verse>
			</chapter>
			<chapter number="5">
				<verse number="1">ಫಿಲಿಷ್ಟಿಯರು ದೇವರ ಮಂಜೂಷವನ್ನು ಎಬೆನೆಜೆರಿನಿಂದ ಅಷ್ಡೋದಿನಲ್ಲಿರುವ ದಾಗೋನನ ಗುಡಿಗೆ ಒಯ್ದರು.</verse>
				<verse number="2">ಅಲ್ಲಿ ಅದನ್ನು ದಾಗೋನನ ಮಗ್ಗುಲಲ್ಲೇ ಇಟ್ಟರು.</verse>
				<verse number="3">ಅಷ್ಡೋದಿನವರು ಮರುದಿನ ಬೆಳಿಗ್ಗೆ ಎದ್ದು ನೋಡುವಾಗ ದಾಗೋನ್ ವಿಗ್ರಹ ಸರ್ವೇಶ್ವರನ ಮಂಜೂಷದ ಮುಂದೆ ಬೋರಲುಬಿದ್ದಿರುವುದನ್ನು ಕಂಡು ಅದನ್ನು ಪುನಃ ಅದರ ಸ್ಥಳದಲ್ಲಿಟ್ಟರು.</verse>
				<verse number="4">ಮಾರನೆಯ ದಿನ ಬೆಳಿಗ್ಗೆ ನೋಡುವಾಗ ದಾಗೋನನ ತಲೆ ಮತ್ತು ಕೈಗಳು ಮುರಿದು ಹೊಸ್ತಿಲಿನ ಮೇಲೆ ಬಿದ್ದಿದ್ದವು; ಮುಂಡ ಮಾತ್ರ ಸರ್ವೇಶ್ವರನ ಮಂಜೂಷದ ಮುಂದೆ ಬಿದ್ದಿತ್ತು.</verse>
				<verse number="5">(ಇಂದಿನವರೆಗೂ ದಾಗೋನನ ಯಾಜಕರು ಹಾಗು ಅವನ ಬಳಿಗೆ ಬರುವವರೆಲ್ಲರು ಅಷ್ಡೋದಿನ ಗುಡಿಯ ಹೊಸ್ತಿಲನ್ನು ತುಳಿಯದಿರುವುದಕ್ಕೆ ಇದೇ ಕಾರಣ.)</verse>
				<verse number="6">ಸರ್ವೇಶ್ವರನ ಹಸ್ತ ಅಷ್ಡೋದಿನವರಿಗೆ ಬಾಧಕವಾಗಿತ್ತು. ಸರ್ವೇಶ್ವರ ಗಡ್ಡೆರೋಗವನ್ನು ಬರಮಾಡಿ ಅವರ ನಗರವನ್ನೂ ಅದರ ಗ್ರಾಮಗಳನ್ನೂ ಹಾಳುಮಾಡಿದರು.</verse>
				<verse number="7">ಇದನ್ನು ನೋಡಿ ಆ ಅಷ್ಡೋದಿನ ಜನರು, “ಇಸ್ರಯೇಲ್ ದೇವರ ಮಂಜೂಷ ನಮ್ಮಲ್ಲಿರಬಾರದು; ಆತನ ಹಸ್ತ ನಮಗೂ ನಮ್ಮ ದೇವರಾದ ದಾಗೋನನಿಗೂ ಬಾಧಕವಾಗಿದೆ,” ಎಂದು ಹೇಳಿ</verse>
				<verse number="8">ಫಿಲಿಷ್ಟಿಯದ ರಾಜರೆಲ್ಲರನ್ನು ಕೂಡಿಸಿ, “ಇಸ್ರಯೇಲ್ ದೇವರ ಮಂಜೂಷವನ್ನು ಏನು ಮಾಡೋಣ?” ಎಂದು ವಿಚಾರಿಸಿದರು. ಅವರು ಅದನ್ನು ಗತ್ ಊರಿಗೆ ಕಳುಹಿಸಬೇಕೆಂದು ನಿರ್ಣಯಿಸಿದರು. ಹಾಗೆಯೇ ಇಸ್ರಯೇಲ್ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.</verse>
				<verse number="9">ಮಂಜೂಷವು ಅಲ್ಲಿ ಹೋದ ಮೇಲೆ ಸರ್ವೇಶ್ವರನ ಹಸ್ತ ಆ ಊರಿನವರಿಗೂ ಬಾಧಕವಾದುದರಿಂದ ಅಲ್ಲಿ ದೊಡ್ಡ ಗದ್ದಲ ಎದ್ದಿತು. ಸರ್ವೇಶ್ವರ ಆ ಊರಿನ ಚಿಕ್ಕವರಲ್ಲೂ ದೊಡ್ಡವರಲ್ಲೂ ಗಡ್ಡೆಗಳನ್ನು ಬರಮಾಡಿದರು.</verse>
				<verse number="10">ಆದುದರಿಂದ ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ಅದು ಅಲ್ಲಿಗೆ ಬಂದಾಗ ಆ ಊರಿನವರು, “ನೋಡಿ, ನಮ್ಮನ್ನೂ ನಮಗೆ ಸೇರಿದವರನ್ನೂ ಕೊಲ್ಲುವುದಕ್ಕಾಗಿಯೇ ಇಸ್ರಯೇಲ್ ದೇವರ ಮಂಜೂಷವನ್ನು ಇಲ್ಲಿಗೆ ಕಳುಹಿಸಿದ್ದಾರೆ,” ಎಂದು ಕೂಗಾಡಿದರು.</verse>
				<verse number="11">ದೇವರ ಹಸ್ತ ಅವರಿಗೂ ಬಾಧಕವಾಗಿದ್ದುದರಿಂದ ಅವರಿಗೆ ಮರಣಭಯವುಂಟಾಯಿತು. ಅವರು ಫಿಲಿಷ್ಟಿಯ ರಾಜರೆಲ್ಲರನ್ನು ಕೂಡಿಸಿ, “ಇಸ್ರಯೇಲ್ ದೇವರ ಮಂಜೂಷದಿಂದ ನಮಗೂ ನಮ್ಮ ಜನರಿಗೂ ಮರಣವುಂಟಾಗದ ಹಾಗೆ ಅದನ್ನು ಅದರ ಸ್ಥಳಕ್ಕೆ ಕಳುಹಿಸಿಬಿಡಿ,” ಎಂದು ಕೇಳಿಕೊಂಡರು.</verse>
				<verse number="12">ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟ ಗಗನಕ್ಕೇರಿತ್ತು.</verse>
			</chapter>
			<chapter number="6">
				<verse number="1">ಸರ್ವೇಶ್ವರನ ಮಂಜೂಷ ಫಿಲಿಷ್ಟಿಯರ ದೇಶದಲ್ಲಿ ಏಳು ತಿಂಗಳಿತ್ತು.</verse>
				<verse number="2">ಫಿಲಿಷ್ಟಿಯರು ಅವರ ಪೂಜಾರಿಗಳನ್ನೂ ಮಂತ್ರಗಾರರನ್ನೂ ಕರೆದು, “ಸರ್ವೇಶ್ವರನ ಮಂಜೂಷವನ್ನು ಏನು ಮಾಡಬೇಕು? ಅದನ್ನು ಮರಳಿ ಅದರ ಸ್ಥಳಕ್ಕೆ ಹೇಗೆ ಕಳುಹಿಸುವುದು? ನಮಗೆ ತಿಳಿಸಿ,” ಎಂದು ಕೇಳಿಕೊಂಡರು.</verse>
				<verse number="3">ಮರುತ್ತರವಾಗಿ ಅವರು, “ಇಸ್ರಯೇಲ್ ದೇವರ ಮಂಜೂಷವನ್ನು ಸುಮ್ಮನೆ ಕಳುಹಿಸಬಾರದು; ನಿಮ್ಮ ಪಾಪಕ್ಕಾಗಿ ಪ್ರಾಯಶ್ಚಿತ್ತ ದ್ರವ್ಯದೊಡನೆ ಕಳುಹಿಸಬೇಕು. ಆಗ ಮಾತ್ರ ನೀವು ಗುಣಹೊಂದುವಿರಿ; ಅಲ್ಲದೆ ಅವರ ದೇವರ ಶಿಕ್ಷಾಹಸ್ತ ನಿಮ್ಮನ್ನು ಬಾಧಿಸುತ್ತಿದ್ದುದಕ್ಕೆ ಕಾರಣ ಗೊತ್ತಾಗುವುದು,” ಎಂದು ಹೇಳಿದರು.</verse>
				<verse number="4">ಆ ಜನರು, “ನಾವು ಪ್ರಾಯಶ್ಚಿತಾರ್ಥವಾಗಿ ಏನನ್ನು ಕಳುಹಿಸಬೇಕು?” ಎಂದು ವಿಚಾರಿಸಿದರು. ಅದಕ್ಕೆ ಅವರು, “ನಿಮಗೂ ನಿಮ್ಮ ರಾಜರುಗಳಿಗೂ ಒಂದೇ ವಿಧವಾದ ವ್ಯಾಧಿ ಇರುವುದರಿಂದ ನಿಮ್ಮ ರಾಜರುಗಳ ಸಂಖ್ಯೆಗೆ ಸರಿಯಾಗಿ ಐದು ಬಂಗಾರದ ಗಡ್ಡೆಗಳನ್ನು ಹಾಗು ಐದು ಬಂಗಾರದ ಇಲಿಗಳನ್ನು ಮಾಡಿಸಬೇಕು.</verse>
				<verse number="5">ನಿಮ್ಮ ದೇಶನಿವಾಸಿಗಳ ವಿನಾಶಕ್ಕೆ ಕಾರಣವಾಗಿರುವ ಈ ಗಡ್ಡೆಗಳ ಹಾಗು ಇಲಿಗಳ ರೂಪವನ್ನು ಚಿನ್ನದಿಂದ ಮಾಡಿಸಿ ಇಸ್ರಯೇಲ್ ದೇವರಿಗೆ ಬಹುಮಾನವಾಗಿ ಕೊಡಿ. ಆಗ ಆತನ ಶಿಕ್ಷಾಹಸ್ತ ನಿಮ್ಮನ್ನೂ ನಿಮ್ಮ ದೇವತೆಗಳನ್ನೂ ಹಾಗು ಪ್ರಾಂತ್ಯಗಳನ್ನೂ ಬಿಟ್ಟುಹೋಗಬಹುದು.</verse>
				<verse number="6">ಈಜಿಪ್ಟ್ ನವರಂತೆ ಆಗಲಿ, ಫರೋಹನಂತೆ ಆಗಲಿ ನೀವೇಕೆ ನಿಮ್ಮ ಹೃದಯಗಳನ್ನು ಕಠಿಣಪಡಿಸಿಕೊಳ್ಳಬೇಕು? ಇಸ್ರಯೇಲರನ್ನು ಕಳುಹಿಸಲೊಲ್ಲದ ಈ ಈಜಿಪ್ಟ್ ನವರನ್ನು ಸರ್ವೇಶ್ವರನು ಎಷ್ಟೋ ವಿಧವಾಗಿ ಬಾಧಿಸಬೇಕಾಯಿತಲ್ಲವೆ?</verse>
				<verse number="7">ಈಗ ನೀವು ಒಂದು ಹೊಸ ಒಡಂಬಡಿಕೆಯನ್ನು ಮಾಡಿಸಿರಿ. ಅದಕ್ಕೆ ಹಾಲುಕರೆಯುವ ಮತ್ತು ಎಂದೂ ನೊಗಹೊರದ ಎರಡು ಹಸುಗಳನ್ನು ಹೂಡಿಸಿರಿ.</verse>
				<verse number="8">ಆ ಬಂಡಿಯ ಮೇಲೆ ಸರ್ವೇಶ್ವರನ ಮಂಜೂಷವನ್ನು ಹಾಗು ನೀವು ಪ್ರಾಯಶ್ಚಿತಾರ್ಥವಾಗಿ ಕೊಡುವ ಬಂಗಾರದ ವಸ್ತುಗಳುಳ್ಳ ಚಿಕ್ಕಪೆಟ್ಟಿಗೆಯನ್ನು ಇಡಿ. ಬಳಿಕ ಆ ಬಂಡಿಯನ್ನು ಹೊರಡಿಸಿ ಹೋಗಬಿಡಿ. ಆ ಹಸುಗಳ ಕರುಗಳನ್ನು ಮನೆಗೆ ತೆಗೆದುಕೊಂಡು ಹೋಗಿ.</verse>
				<verse number="9">ಬಂಡಿ ಹೋಗುವ ದಾರಿಯನ್ನು ಗಮನಿಸಿರಿ. ಅದು ತಾನಾಗಿ ಸ್ವದೇಶದ ದಾರಿಹಿಡಿದು ಬೇತ್‍ಷೆಮೆಷಿನ ಕಡೆಗೆ ಹೋದರೆ ಈಗ ಬಂದಿರುವ ಕೇಡನ್ನು ಕಳುಹಿಸಿದವನು ಆ ಸರ್ವೇಶ್ವರನೇ ಎಂದು ತಿಳಿಯಿರಿ. ಬಂಡಿ ಆ ಮಾರ್ಗವನ್ನು ಹಿಡಿಯದಿದ್ದರೆ ಆ ಸರ್ವೇಶ್ವರನ ಹಸ್ತ ನಮ್ಮನ್ನು ಮುಟ್ಟಲಿಲ್ಲ, ಈ ಕೇಡು ಆಕಸ್ಮಿಕವಾಗಿ ಬಂದಿದೆ ಎಂದು ತಿಳಿದುಕೊಳ್ಳಿ,” ಎಂದು ಹೇಳಿದರು.</verse>
				<verse number="10">ಫಿಲಿಷ್ಟಿಯರು ಅದೇ ಪ್ರಕಾರ ಮಾಡಿದರು; ಹಾಲುಕರೆಯುವ ಎರಡು ಹಸುಗಳನ್ನು ತೆಗೆದುಕೊಂಡು ಬಂಡಿಗೆ ಹೂಡಿದರು. ಅವುಗಳ ಕರುಗಳನ್ನು ಮನೆಯಲ್ಲೇ ಕಟ್ಟಿಹಾಕಿದರು.</verse>
				<verse number="11">ಸರ್ವೇಶ್ವರನ ಮಂಜೂಷವನ್ನು ಮತ್ತು ಚಿನ್ನದ ಇಲಿಗಳೂ ಗಡ್ಡೆಗಳೂ ಇದ್ದ ಚಿಕ್ಕಪೆಟ್ಟಿಗೆಯನ್ನು ಬಂಡಿಯಲ್ಲಿ ಇಟ್ಟರು.</verse>
				<verse number="12">ಕೂಡಲೆ ಆ ಹಸುಗಳು ಬೇತ್‍ಷೆಮೆಷಿನ ರಾಜಮಾರ್ಗವನ್ನು ಹಿಡಿದು, ಅಂಬಾ ಎನ್ನುತ್ತಾ ನೆಟ್ಟಗೆ ಮುಂದೆ ಸಾಗಿದವು. ಎಡಕ್ಕಾಗಲಿ, ಬಲಕ್ಕಾಗಲಿ ತಿರುಗಲಿಲ್ಲ. ಫಿಲಿಷ್ಟಿಯ ರಾಜರುಗಳು ಬೇತ್ ಷೆಮೆಷಿನ ಎಲ್ಲೆಯವರೆಗೂ ಅವುಗಳ ಹಿಂದೆಹೋದರು.</verse>
				<verse number="13">ಬೇತ್ ಷೆಮೆಷಿನವರು ಅಲ್ಲಿನ ತಗ್ಗಿನಲ್ಲಿ ಗೋದಿಬೆಳೆಯನ್ನು ಕೊಯ್ಯುತ್ತಿದ್ದರು. ಕಣ್ಣೆತ್ತಿ ಸರ್ವೇಶ್ವರನ ಮಂಜೂಷವನ್ನು ನೋಡಿ ಬಹಳ ಸಂತೋಷಪಟ್ಟರು.</verse>
				<verse number="14">ಆ ಬಂಡಿ ಬೇತ್‍ಷೆಮೆಷಿನವನಾದ ಯೆಹೋಶುವನ ಹೊಲದಲ್ಲಿದ್ದ ಒಂದು ದೊಡ್ಡ ಕಲ್ಲಿನ ಬಳಿ ಬಂದು ನಿಂತಿತು. ಅವರು ಅಲ್ಲಿಗೆ ಹೋಗಿ, ಬಂಡಿಯ ಕಟ್ಟಿಗೆಗಳನ್ನು ಮುರಿದು, ಅಗ್ನಿ ಮಾಡಿ ಆ ಹಸುಗಳನ್ನು ಸರ್ವೇಶ್ವರನಿಗೆ ದಹನಬಲಿಯಾಗಿ ಅರ್ಪಿಸಿದರು.</verse>
				<verse number="15">ಲೇವಿಯರು ಸರ್ವೇಶ್ವರನ ಮಂಜೂಷವನ್ನು ಹಾಗು ಚಿನ್ನದ ವಸ್ತುಗಳಿದ್ದ ಚಿಕ್ಕಪೆಟ್ಟಿಗೆಯನ್ನು ಇಳಿಸಿ ಆ ದೊಡ್ಡ ಕಲ್ಲಿನ ಮೇಲಿಟ್ಟರು. ಬೇತ್‍ಷೆಮೆಷಿನವರು ಅದೇ ದಿನ ಸರ್ವೇಶ್ವರನಿಗೆ ದಹನಬಲಿಗಳನ್ನು ಹಾಗು ಶಾಂತಿಸಮಾಧಾನದ ಬಲಿಗಳನ್ನು ಸಮರ್ಪಿಸಿದರು.</verse>
				<verse number="16">ಇದನ್ನೆಲ್ಲ ನೋಡಿದ ಮೇಲೆ ಫಿಲಿಷ್ಟಿಯರ ಐದು ಮಂದಿ ರಾಜರು ಅದೇ ದಿನ ಎಕ್ರೋನಿಗೆ ಹಿಂದಿರುಗಿದರು.</verse>
				<verse number="17">ಫಿಲಿಷ್ಟಿಯರು ಸರ್ವೇಶ್ವರನಿಗೆ ಪ್ರಾಯಶ್ಚಿತಾರ್ಥವಾಗಿ ಸಮರ್ಪಿಸಿದ ಚಿನ್ನದ ಗಡ್ಡೆಗಳ ಸಂಸ್ಥಾನಾನುಸಾರವಾದ ಪಟ್ಟಿ ಇದು: ಅಷ್ಡೋದ್, ಗಾಜಾ, ಪರವಾಗಿ ಒಂದು, ಅಷ್ಕೆಲೋನ್ ಪರವಾಗಿ ಒಂದು, ಗತ್ ಪರವಾಗಿ ಒಂದು ಮತ್ತು ಎಕ್ರೋನ್ ಪರವಾಗಿ ಒಂದು,</verse>
				<verse number="18">ಅವರು ಕಳುಹಿಸಿದ ಬಂಗಾರದ ಇಲಿಗಳು ಫಿಲಿಷ್ಟಿಯರ ಐದು ಮಂದಿ ರಾಜರ ಅಧೀನದಲ್ಲಿದ್ದ ಎಲ್ಲ ಪುಟ್ಟ ಗ್ರಾಮಗಳ ಹಾಗು ಕೋಟೆಪೇಟೆಗಳ ಸಂಖ್ಯೆಗೆ ಸರಿಯಾಗಿದ್ದವು. ಸರ್ವೇಶ್ವರನ ಮಂಜೂಷವನ್ನು ಇಡಲಾಗಿದ್ದ ಆ ದೊಡ್ಡ ಕಲ್ಲು ಇಂದಿನವರೆಗೂ ಬೇತ್ ಷೆಮೆಷಿನ ಯೆಹೋಶುವಿನ ಹೊಲದಲ್ಲಿ ಸಾಕ್ಷಿಯಾಗಿ ನಿಂತಿದೆ.</verse>
				<verse number="19">ಮಂಜೂಷವನ್ನು ತೆರೆದು ನೋಡಿದ ಬೇತ್ ಷೆಮೆಷಿನವರಾದ ಎಪ್ಪತ್ತು ಮಂದಿಯನ್ನು ಸರ್ವೇಶ್ವರ ನಾಶಮಾಡಿದರು. ಈ ವಿನಾಶಕ್ಕಾಗಿ ಬೇತ್ ಷೆಮೆಷಿನವರು ಗೋಳಾಡಿದರು.</verse>
				<verse number="20">“ಪರಮಪಾವನ ದೇವರಾದ ಸರ್ವೆಶ್ವರನ ಮುಂದೆ ಯಾರು ತಾನೆ ನಿಂತಾರು? ಇನ್ನು ಮುಂದೆ ಇವರು ಹೋಗತಕ್ಕ ಸ್ಥಳ ಯಾವುದು?” ಎಂದು ಮಾತಾಡಿಕೊಂಡರು ಜನರು.</verse>
				<verse number="21">ಕಿರ್ಯತ್ಯಾರೀಮಿನವರ ಬಳಿಗೆ ದೂತರನ್ನು ಕಳುಹಿಸಿ, “ಫಿಲಿಷ್ಟಿಯರು ಸರ್ವೇಶ್ವರನ ಮಂಜೂಷವನ್ನು ಕಳುಹಿಸಿದ್ದಾರೆ; ನೀವು ಬಂದು ಅದನ್ನು ತೆಗೆದುಕೊಂಡು ಹೋಗಿ,” ಎಂದು ತಿಳಿಸಿದರು.</verse>
			</chapter>
			<chapter number="7">
				<verse number="1">ಆಗ ಕಿರ್ಯತ್ಯಾರೀಮಿನವರು ಬಂದು ಸರ್ವೇಶ್ವರನ ಮಂಜೂಷವನ್ನು ತೆಗೆದುಕೊಂಡು ಹೋದರು. ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಲ್ಲಿ ಅದನ್ನು ಇಟ್ಟು, ಅವನ ಮಗ ಎಲ್ಲಾಜಾರನನ್ನು ಅದರ ಸೇವೆಗಾಗಿ ಪ್ರತಿಷ್ಠಿಸಿದರು.</verse>
				<verse number="2">ಮಂಜೂಷವು ಕಿರ್ಯತ್ಯಾರೀಮಿಗೆ ಬಂದು ಬಹಳ ದಿವಸಗಳು ಅಂದರೆ, ಇಪ್ಪತ್ತು ವರ್ಷಗಳು ಕಳೆದುಹೋದವು. ಈ ಕಾಲದಲ್ಲಿ ಎಲ್ಲ ಇಸ್ರಯೇಲರು ಸರ್ವೇಶ್ವರನಿಗಾಗಿ ಹಂಬಲಿಸುತ್ತಿದ್ದರು.</verse>
				<verse number="3">ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಸರ್ವೇಶ್ವರನಿಗೆ ಅಭಿಮುಖರಾಗಿ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿರಿ. ಸರ್ವೇಶ್ವರನ ಮೇಲೆಯೇ ಮನಸ್ಸಿಟ್ಟು ಅವರೊಬ್ಬರಿಗೇ ಸೇವೆಸಲ್ಲಿಸಿರಿ; ಆಗ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವರು,” ಎಂದನು.</verse>
				<verse number="4">ಹಾಗೆಯೇ ಇಸ್ರಯೇಲರು ಬಾಳ್ ಅಷ್ಟೋರೆತ್ ದೇವತೆಗಳನ್ನು ತೆಗೆದುಹಾಕಿ ಸರ್ವೇಶ್ವರಸ್ವಾಮಿಯೊಬ್ಬರಿಗೆ ಸೇವೆ ಸಲ್ಲಿಸತೊಡಗಿದರು.</verse>
				<verse number="5">ಸಮುವೇಲನು ಪುನಃ ಅವರಿಗೆ, “ಇಸ್ರಯೇಲರೆಲ್ಲರೂ ಮಿಚ್ಪೆಯಲ್ಲಿ ಕೂಡಿಬರಲಿ; ನಾನು ನಿಮಗೋಸ್ಕರ ಸರ್ವೇಶ್ವರನನ್ನು ಪ್ರಾರ್ಥಿಸುವೆನು,” ಎಂದನು.</verse>
				<verse number="6">ಅಂತೆಯೇ ಅವರು ಅಲ್ಲಿ ಕೂಡಿಬಂದು, ನೀರು ಸೇದಿ ಸರ್ವೇಶ್ವರನ ಮುಂದೆ ಹೊಯ್ದು, ಆ ದಿವಸ ಉಪವಾಸವಿದ್ದು, ದ್ರೋಹಿಗಳಾಗಿದ್ದೇವೆಂದು ಸರ್ವೇಶ್ವರನಿಗೆ ಅರಿಕೆಮಾಡಿದರು. ಸಮುವೇಲನು ಮಿಚ್ಪೆಯಲ್ಲಿ ಇಸ್ರಯೇಲರ ವ್ಯಾಜ್ಯಗಳನ್ನು ತೀರಿಸಿದನು.</verse>
				<verse number="7">ಇಸ್ರಯೇಲರು ಮಿಚ್ಪೆಯಲ್ಲಿ ಕೂಡಿಬಂದಿದ್ದಾರೆಂಬುದು ಫಿಲಿಷ್ಟಿಯರಿಗೆ ಗೊತ್ತಾದಾಗ ಅವರ ರಾಜರುಗಳು ಇಸ್ರಯೇಲರಿಗೆ ವಿರುದ್ಧ ಯುದ್ಧಕ್ಕೆ ಹೊರಟರು. ಇದನ್ನು ತಿಳಿದ ಇಸ್ರಯೇಲರು ಬಹಳವಾಗಿ ಭಯಪಟ್ಟರು.</verse>
				<verse number="8">ಅವರು ಸಮುವೇಲನಿಗೆ, “ನಮ್ಮ ದೇವರಾದ ಸರ್ವೇಶ್ವರ ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವ ಹಾಗೆ ನೀವು ನಮಗೋಸ್ಕರ ಪ್ರಾರ್ಥನೆಮಾಡಿ, ಸುಮ್ಮನಿರಬೇಡಿ,” ಎಂದರು.</verse>
				<verse number="9">ಆಗ ಸಮುವೇಲನು ಹಾಲುಕುಡಿಯುವ ಒಂದು ಕುರಿಮರಿಯನ್ನು ತಂದು ಸರ್ವೇಶ್ವರನಿಗೆ ದಹನಬಲಿಯಾಗಿ ಸಮರ್ಪಿಸಿ, ಇಸ್ರಯೇಲರ ಪರವಾಗಿ ಪ್ರಾರ್ಥನೆಮಾಡಿದನು. ಸರ್ವೇಶ್ವರ ಸದುತ್ತರವನ್ನು ದಯಪಾಲಿಸಿದರು.</verse>
				<verse number="10">ಹೇಗೆಂದರೆ, ಸಮುವೇಲನು ಬಲಿಯನ್ನರ್ಪಿಸುವ ವೇಳೆಯಲ್ಲಿ ಫಿಲಿಷ್ಟಿಯರು ಯುದ್ಧಕ್ಕಾಗಿ ಸಮೀಪಿಸಿದರು. ಸರ್ವೇಶ್ವರ ದೊಡ್ಡ ಗುಡುಗಿನಿಂದ ಅವರನ್ನು ಕಳವಳಗೊಳಿಸಿ, ಇಸ್ರಯೇಲರಿಗೆ ಸೋತು ಓಡಿಹೋಗುವಂತೆ ಮಾಡಿದರು.</verse>
				<verse number="11">ಇಸ್ರಯೇಲರಾದರೋ ಮಿಚ್ಪೆಯಿಂದ ಹೊರಟು ಬೇತ್ಕರಿನ ತಗ್ಗಿನವರೆಗೆ ಅವರನ್ನು ಹಿಂಬಾಲಿಸಿ ಹತಮಾಡಿದರು.</verse>
				<verse number="12">ಅನಂತರ ಸಮುವೇಲನು ಮಿಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ, “ಸರ್ವೇಶ್ವರ ಇಲ್ಲಿಯವರೆಗೆ ನಮಗೆ ಸಹಾಯ ಮಾಡಿದರು,” ಎಂದು ಹೇಳಿ ಅದಕ್ಕೆ, ‘ಎಬನೆಜೆರ್’ ಎಂದು ಹೆಸರಿಟ್ಟನು.</verse>
				<verse number="13">ಫಿಲಿಷ್ಟಿಯರು ಸೋತುಹೋದುದರಿಂದ ಮತ್ತೆ ಇಸ್ರಯೇಲರ ಪ್ರಾಂತ್ಯದೊಳಗೆ ಬರಲೇ ಇಲ್ಲ. ಸಮುವೇಲನ ಜೀವಮಾನದಲ್ಲೆಲ್ಲಾ ಸರ್ವೇಶ್ವರನ ಹಸ್ತ ಫಿಲಿಷ್ಟಿಯರಿಗೆ ವಿರೋಧವಾಗಿಯೇ ಇತ್ತು.</verse>
				<verse number="14">ಅವರು ಎಕ್ರೋನ್ ಮೊದಲುಗೊಂಡು ಗತ್ ಊರಿನವರೆಗೆ ಇಸ್ರಯೇಲರಿಂದ ಕಿತ್ತುಕೊಂಡಿದ್ದ ಎಲ್ಲ ಪಟ್ಟಣಗಳು ಇಸ್ರಯೇಲರಿಗೆ ದೊರಕಿದವು. ಅವುಗಳಿಗೆ ಸೇರಿದ ಗ್ರಾಮಗಳನ್ನೂ ಇಸ್ರಯೇಲರು ಫಿಲಿಷ್ಟಿಯರಿಂದ ತೆಗೆದುಕೊಂಡರು. ಇಸ್ರಯೇಲರಿಗೂ ಅಮೋರಿಯರಿಗೂ ಸಮಾಧಾನವಿತ್ತು.</verse>
				<verse number="15">ಸಮುವೇಲನು ಜೀವದಿಂದಿರುವವರೆಗೆ ಇಸ್ರಯೇಲರನ್ನು ಪಾಲಿಸುತ್ತಿದ್ದನು.</verse>
				<verse number="16">ಅವನು ಇಸ್ರಯೇಲರ ನ್ಯಾಯಗಳನ್ನು ತೀರಿಸುವುದಕ್ಕಾಗಿ ಪ್ರತಿವರ್ಷವೂ ಬೇತೇಲ್, ಗಿಲ್ಗಾಲ್, ಮಿಚ್ಪೆ ಎಂಬ ಪಟ್ಟಣಗಳನ್ನು ಸುತ್ತಿ ರಾಮಾಕ್ಕೆ ತಿರುಗಿ ಬರುತ್ತಿದ್ದನು.</verse>
				<verse number="17">ಅಲ್ಲಿ ಅವನ ಸ್ವಂತ ಮನೆ ಇದ್ದುದರಿಂದ ಅಲ್ಲಿಯೇ ಸರ್ವೇಶ್ವರನಿಗೆ ಒಂದು ಬಲಿಪೀಠವನ್ನು ಕಟ್ಟಿಸಿ ಇಸ್ರಯೇಲರನ್ನು ಪಾಲಿಸುತ್ತಿದ್ದನು.</verse>
			</chapter>
			<chapter number="8">
				<verse number="1">ಸಮುವೇಲನು ಮುದುಕನಾದ ಮೇಲೆ ತನ್ನ ಮಕ್ಕಳನ್ನು ಇಸ್ರಯೇಲರಿಗೆ ನ್ಯಾಯಸ್ಥಾಪಕರನ್ನಾಗಿ ಮಾಡಿದನು.</verse>
				<verse number="2">ಅವನ ಹಿರಿಯ ಮಗನ ಹೆಸರು ಯೋವೇಲ್, ಎರಡನೇ ಮಗನ ಹೆಸರು ಅಬೀಯ; ಇವರ ನ್ಯಾಯಾಸನವು ಬೇರ್ಷೆಬದಲ್ಲಿತ್ತು.</verse>
				<verse number="3">ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚ ತೆಗೆದುಕೊಂಡು ನ್ಯಾಯವಿರುದ್ಧವಾದ ತೀರ್ಪು ಮಾಡುತ್ತಿದ್ದರು.</verse>
				<verse number="4">ಆದುದರಿಂದ ಇಸ್ರಯೇಲರ ಹಿರಿಯರೆಲ್ಲರೂ ಕೂಡಿ ರಾಮಾದಲ್ಲಿದ್ದ ಸಮುವೇಲನ ಬಳಿಗೆ ಬಂದು,</verse>
				<verse number="5">“ತಾವಂತೂ ಮುದುಕರಾದಿರಿ; ನಿಮ್ಮ ಮಕ್ಕಳು ನಿಮ್ಮ ಮಾರ್ಗದಲ್ಲಿ ನಡೆಯುವುದಿಲ್ಲ. ಆದುದರಿಂದ ಬೇರೆ ಎಲ್ಲ ಜನಾಂಗಗಳಿಗಿರುವಂತೆ ನಮಗೂ ಒಬ್ಬ ಅರಸನನ್ನು ನೇಮಿಸಿ; ಅವನೇ ನಮ್ಮ ನ್ಯಾಯಸ್ಥಾಪಕನಾಗಿರಲಿ,” ಎಂದರು.</verse>
				<verse number="6">‘ನ್ಯಾಯಸ್ಥಾಪನೆಗಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಡಿ’ ಎಂಬ ಮಾತಿಗೆ ಸಮುವೇಲನು ದುಃಖಪಟ್ಟನು. ಸರ್ವೇಶ್ವರನನ್ನು ಪ್ರಾರ್ಥಿಸಿದನು.</verse>
				<verse number="7">ಸರ್ವೇಶ್ವರ ಅವನಿಗೆ, “ಜನರು ಹೇಳಿದಂತೆಯೇ ಮಾಡು; ಅವರು ನಿನ್ನನ್ನಲ್ಲ, ನನ್ನನ್ನು ತಿರಸ್ಕರಿಸಿದ್ದಾರೆ. ನನ್ನ ಆಳ್ವಿಕೆ ಬೇಡವೆನ್ನುತ್ತಾರೆ.</verse>
				<verse number="8">ನಾನು ಅವರನ್ನು ಈಜಿಪ್ಟಿನಿಂದ ಬಿಡಿಸಿದೆ. ಅಂದಿನಿಂದ ಇಂದಿನವರೆಗೂ ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಪೂಜಿಸಿದರು. ನನಗೆ ಹೇಗೆ ಮಾಡಿದರೋ ಹಾಗೆಯೇ ನಿನಗೂ ಮಾಡುತ್ತಾರೆ.</verse>
				<verse number="9">ನೀನು ಈಗ ಅವರು ಕೇಳಿಕೊಂಡಂತೆ ಮಾಡು; ಆದರೆ ಅವರ ಮೇಲೆ ರಾಜರಿಗಿರುವ ಅಧಿಕಾರ ಎಷ್ಟು ಘನವಾದುದೆಂಬುದನ್ನು ಅವರಿಗೆ ತಿಳಿಸಿ ಎಚ್ಚರಿಸದೆ ಇರಬೇಡ,” ಎಂದು ಹೇಳಿದರು.</verse>
				<verse number="10">ಸಮುವೇಲನು ಅರಸಬೇಕೆಂದು ಕೋರಿದ ಜನರಿಗೆ,</verse>
				<verse number="11">ಸರ್ವೇಶ್ವರನ ಮಾತುಗಳನ್ನೆಲ್ಲಾ ತಿಳಿಸಿದನು. “ಅರಸನ ಅಧಿಕಾರ ಎಷ್ಟೆಂದು ಕೇಳಿರಿ; ಅವನು ನಿಮ್ಮ ಮಕ್ಕಳನ್ನು ತೆಗೆದುಕೊಂಡು ತನ್ನ ಸಾರಥಿಗಳನ್ನಾಗಿಯೂ ರಾಹುತರನ್ನಾಗಿಯೂ ಮಾಡಿಕೊಳ್ಳುವನು; ಅವರು ಅವರ ರಥಗಳ ಮುಂದೆ ಓಡಬೇಕಾಗುವುದು.</verse>
				<verse number="12">ಕೆಲವರನ್ನು ಸಹಸ್ರಾಧಿಪತಿಗಳನ್ನಾಗಿಯೂ ಕೆಲವರನ್ನು ಪಂಚಾಶದಾಧಿಪತಿಗಳನ್ನಾಗಿಯೂ ನೇಮಿಸುವನು. ಇನ್ನು ಕೆಲವರು ಅವನ ಭೂಮಿಯನ್ನು ಉಳುವವರೂ, ಪೈರನ್ನು ಕೊಯ್ಯುವವರೂ, ಯುದ್ಧಾಯುಧ, ರಥಸಾಮಗ್ರಿಗಳನ್ನು ಮಾಡುವವರೂ ಆಗಬೇಕು.</verse>
				<verse number="13">ಇದಲ್ಲದೆ ಅವನು ನಿಮ್ಮ ಹೆಣ್ಣು ಮಕ್ಕಳನ್ನು ಪರಿಮಳದ್ರವ್ಯ ಮಾಡುವುದಕ್ಕೂ, ಅಡಿಗೆ ಮಾಡುವುದಕ್ಕೂ, ರೊಟ್ಟಿ ಸುಡುವುದಕ್ಕೂ ನೇಮಿಸಿಕೊಳ್ಳುವನು.</verse>
				<verse number="14">ನಿಮ್ಮ ಉತ್ತಮವಾದ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಎಣ್ಣೆ ಮರದ ತೋಪುಗಳನ್ನೂ ಕಿತ್ತುಕೊಂಡು ತನ್ನ ಸೇವಕರಿಗೆ ಕೊಡುವನು.</verse>
				<verse number="15">ನಿಮ್ಮ ಧಾನ್ಯದ್ರಾಕ್ಷಿಗಳಲ್ಲಿ ದಶಮಾಂಶವನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಪರಿವಾರದವರಿಗೂ ಕೊಡುವನು.</verse>
				<verse number="16">ನಿಮ್ಮ ದಾಸದಾಸಿಯರನ್ನು ಹಾಗು ಉತ್ತಮವಾದ ಎತ್ತುಕತ್ತೆಗಳನ್ನು ತನಗಾಗಿ ದುಡಿಸಿಕೊಳ್ಳುವನು.</verse>
				<verse number="17">ಕುರಿಹಿಂಡುಗಳಲ್ಲೂ ಹತ್ತರಲ್ಲೊಂದು ಭಾಗವನ್ನು ತೆಗೆದುಕೊಳ್ಳುವನು; ನೀವೂ ಅವನಿಗೆ ಗುಲಾಮರಾಗಿರಬೇಕು.</verse>
				<verse number="18">ಆಗ, ನೀವು ಆರಿಸಿಕೊಂಡ ಅರಸನ ನಿಮಿತ್ತ, ಆ ದಿನದಲ್ಲಿ ಬೇಸತ್ತು ಸರ್ವೇಶ್ವರನಿಗೆ ಮೊರೆಯಿಡುವಿರಿ; ಆಗ ಅವರು ನಿಮ್ಮನ್ನು ಲಕ್ಷಿಸುವುದಿಲ್ಲ,” ಎಂದನು.</verse>
				<verse number="19">ಹೀಗೆ ಸಮುವೇಲನು ಎಷ್ಟು ಹೇಳಿದರೂ ಜನರು ಕೇಳದೆ ಹೋದರು. “ಅದಿರಲಿ; ನಮಗೆ ಅರಸನನ್ನು ಕೊಡು; ನಾವು ಇತರ ಜನಾಂಗಗಳಂತೆ ಆಗಬೇಕು.</verse>
				<verse number="20">ನಮ್ಮ ನ್ಯಾಯಗಳನ್ನು ತೀರಿಸಿ, ನಮಗೆ ಮುಂದಾಗಿ ಹೊರಟು, ನಮ್ಮ ಪರವಾಗಿ ಯುದ್ಧಮಾಡುವ ಒಬ್ಬ ಅರಸನು ಬೇಕು,” ಎಂದು ಹೇಳಿದರು.</verse>
				<verse number="21">ಸಮುವೇಲನು ಜನರ ಈ ಎಲ್ಲ ಮಾತುಗಳನ್ನು ಸರ್ವೇಶ್ವರನಿಗೆ ತಿಳಿಸಿದನು.</verse>
				<verse number="22">ಸರ್ವೇಶ್ವರ ಅವನಿಗೆ, “ಅವರ ಇಷ್ಟದಂತೆ ಅವರಿಗೊಬ್ಬ ಅರಸನನ್ನು ನೇಮಿಸು,” ಎಂದರು. ಆಗ ಸಮುವೇಲನು ಇಸ್ರಯೇಲರಿಗೆ, “ನಿಮ್ಮ ನಿಮ್ಮ ಊರುಗಳಿಗೆ ಹೋಗಿರಿ,” ಎಂದು ಅಪ್ಪಣೆಕೊಟ್ಟನು.</verse>
			</chapter>
			<chapter number="9">
				<verse number="1">ಬೆನ್ಯಾಮೀನ ಕುಲದಲ್ಲಿ ಕೀಷನೆಂಬ ಒಬ್ಬ ಐಶ್ವರ್ಯವಂತನಿದ್ದನು. ಇವನು ಚೆರೋರನ ಮಗನೂ ಬೆಕೋರತನ ಮೊಮ್ಮಗನೂ ಆಫೀಹನ ಮರಿಮಗನೂ ಆದ ಅಬೀಯೇಲನ ಮಗ.</verse>
				<verse number="2">ಇವನಿಗೆ ಸೌಲನೆಂಬ ಒಬ್ಬ ಮಗನಿದ್ದನು. ಈ ಸೌಲನು ಉತ್ತಮನೂ ಇಸ್ರಯೇಲರಲ್ಲೆಲ್ಲ ಅತಿಸುಂದರನೂ ಆಗಿದ್ದನು; ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಎತ್ತರ ಆಗಿದ್ದನು.</verse>
				<verse number="3">ಒಂದು ದಿನ ಸೌಲನ ತಂದೆಯಾದ ಕೀಷನ ಕತ್ತೆಗಳು ಕಾಣದೆಹೋದವು. ಅವನು ತನ್ನ ಮಗ ಸೌಲನಿಗೆ, “ನೀನೆದ್ದು ಆಳುಗಳಲ್ಲೊಬ್ಬನನ್ನು ಕರೆದುಕೊಂಡು ಕತ್ತೆಗಳನ್ನು ಹುಡುಕಲು ಹೋಗು,” ಎಂದು ಹೇಳಿದನು.</verse>
				<verse number="4">ಅದರಂತೆಯೇ ಸೌಲನು ಹೊರಟು ಎಫ್ರಯಿಮ್ ಪರ್ವತಪ್ರಾಂತ್ಯ ಹಾಗು ಶಾಲಿಷಾನಾಡು ಇವುಗಳಲ್ಲಿ ಸುತ್ತಾಡಿದರೂ ಅವು ಸಿಕ್ಕಲಿಲ್ಲ. ಶಾಲೀಮ್, ಬೆನ್ಯಾಮೀನ ಈ ಪ್ರಾಂತ್ಯಗಳಲ್ಲಿಯೂ ಸಿಕ್ಕಲಿಲ್ಲ.</verse>
				<verse number="5">ಕಡೆಗೆ ಅವರು ಚೂಫ್ ನಾಡಿಗೆ ಬಂದರು. ಅಲ್ಲಿ ಅವನು ತನ್ನ ಆಳಿಗೆ, “ಹಿಂದಿರುಗಿ ಹೋಗೋಣ ನಡೆ; ನಮ್ಮ ತಂದೆ ಈ ಕತ್ತೆಗಳ ಚಿಂತೆಯನ್ನೇ ಬಿಟ್ಟು ನಮ್ಮ ಚಿಂತೆಯಲ್ಲಿ ಇರಬಹುದು,” ಎಂದನು.</verse>
				<verse number="6">ಆಗ ಆ ಆಳು, “ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೈವಪುರುಷ ಇದ್ದಾನೆ. ಅವನು ನುಡಿಯುವುದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗಬೇಕಾದ ಮಾರ್ಗವನ್ನು ತಿಳಿಸುವನು,” ಎಂದನು.</verse>
				<verse number="7">ಅದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿ ಮುಗಿದುಹೋಯಿತು. ಆ ದೈವಪುರುಷನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿ ಇಲ್ಲವಲ್ಲಾ;</verse>
				<verse number="8">ಏನು ಕೊಡುವುದು?” ಎನ್ನಲು ಆ ಆಳು, “ಇಗೋ, ನನ್ನ ಕೈಯಲ್ಲಿ ಒಂದು ಪಾವಲಿ ಬೆಳ್ಳಿನಾಣ್ಯವಿದೆ; ಇದನ್ನು ಅವನಿಗೆ ಕೊಡೋಣ; ಅವನು ನಮಗೆ ಮಾರ್ಗ ತೋರಿಸುವನು,” ಎಂದು ಉತ್ತರಕೊಟ್ಟನು.</verse>
				<verse number="9">(ಪೂರ್ವಕಾಲದಲ್ಲಿ ಇಸ್ರಯೇಲರಲ್ಲಿ ಯಾವನಾದರೂ ದೇವೋತ್ತರ ಕೇಳಬೇಕಾದರೆ ದಾರ್ಶನಿಕನ ಬಳಿಗೆ ಹೋಗೋಣ ಬನ್ನಿ ಎನ್ನುವನು; ಈ ಕಾಲದಲ್ಲಿ ಪ್ರವಾದಿಗಳೆನಿಸಿಕೊಳ್ಳುವವರನ್ನು ಆ ಕಾಲದಲ್ಲಿ ದಾರ್ಶನಿಕರೆಂದು ಕರೆಯುತ್ತಿದ್ದರು.)</verse>
				<verse number="10">ಆಗ ಸೌಲನು ಆಳಿಗೆ, “ನೀನು ಹೇಳುವುದು ಒಳ್ಳೆಯದು, ಹೋಗೋಣ, ನಡೆ,” ಎಂದನು.</verse>
				<verse number="11">ಅವರಿಬ್ಬರೂ ಗುಡ್ಡ ಹತ್ತಿ ದೇವಪುರುಷನಿದ್ದ ಪಟ್ಟಣವನ್ನು ಸಮೀಪಿಸಿದರು. ನೀರು ಸೇದುವುದಕ್ಕಾಗಿ ಹೊರಗೆ ಬಂದಿದ್ದ ಮಹಿಳೆಯರನ್ನು ಕಂಡು, “ದಾರ್ಶನಿಕರು ಊರಲ್ಲಿ ಇದ್ದಾರೋ?” ಎಂದು ಕೇಳಲು, ಅವರು “ಹೌದು” ಎಂದರು.</verse>
				<verse number="12">“ಈ ದಿನ ನಮ್ಮ ಊರಿನವರು ಗುಡ್ಡದ ಮೇಲೆ ಬಲಿಯನ್ನರ್ಪಿಸುವುದರಿಂದ ಅವರು ಈಗಲೇ ಇಲ್ಲಿಗೆ ಬಂದರು; ಬೇಗನೆ ಹೋಗಿ;</verse>
				<verse number="13">ಅವರು ಬಲಿಭೋಜನಕ್ಕಾಗಿ ಗುಡ್ಡಕ್ಕೆ ಹೋಗುವ ಮೊದಲೇ ನೀವು ಊರೊಳಕ್ಕೆ ಹೋದರೆ ಸಿಕ್ಕುವರು. ಅವರು ಅಲ್ಲಿಗೆ ಹೋಗುವವರೆಗೆ ಜನರು ಊಟಮಾಡುವುದಿಲ್ಲ. ಅವರು ಹೋಗಿ ಬಲಿ ಆಹಾರವನ್ನು ಆಶೀರ್ವದಿಸುತ್ತಾರೆ; ಅನಂತರವೇ ಆಮಂತ್ರಿತರು ಊಟಮಾಡುವುದು. ಈಗಲೇ ಹೋಗಿ; ಅವನು ಸಿಕ್ಕುವ ಸಮಯ ಇದೇ,” ಎಂದರು ಆ ಮಹಿಳೆಯರು.</verse>
				<verse number="14">ಅವರು ಗುಡ್ಡ ಹತ್ತಿ ಊರಿಗೆ ಬಂದಾಗ ಸಮುವೇಲನು ಗುಡ್ಡಕ್ಕೆ ಹೊರಟು ಅವರೆದುರಿಗೆ ಬಂದನು.</verse>
				<verse number="15">ಸೌಲನು ಬರುವುದಕ್ಕೆ ಒಂದು ದಿವಸ ಮುಂದಾಗಿಯೇ ಸರ್ವೇಶ್ವರ ಸಮುವೇಲನಿಗೆ,</verse>
				<verse number="16">“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ನಾಡಿನವನೊಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರ ಮೇಲೆ ನನಗೆ ಕನಿಕರವಿದೆ,” ಎಂದು ತಿಳಿಸಿದರು.</verse>
				<verse number="17">ಸಮುವೇಲನು ಸೌಲನನ್ನು ಕಂಡಾಗ ಸರ್ವೇಶ್ವರ ಅವನಿಗೆ, “ನಾನು ತಿಳಿಸಿದ್ದ ವ್ಯಕ್ತಿ ಇವನೇ; ಇವನೇ ನನ್ನ ಪ್ರಜೆಯನ್ನು ಆಳತಕ್ಕವನು,” ಎಂದು ಸೂಚಿಸಿದರು.</verse>
				<verse number="18">ಊರಬಾಗಿಲಿಗೆ ಬಂದ ಸೌಲನು ಎದುರಿಗೆ ಬಂದ ಸಮುವೇಲನನ್ನು ನೋಡಿ, “ದಾರ್ಶನಿಕರ ಮನೆ ಎಲ್ಲಿದೆ ಎಂಬುದನ್ನು ದಯವಿಟ್ಟು ತಿಳಿಸುವಿರಾ?’ ಎಂದನು.</verse>
				<verse number="19">ಸಮುವೇಲನು, “ನಾನೇ ಆ ದಾರ್ಶನಿಕ; ನೀನು ನನ್ನ ಜೊತೆ ಗುಡ್ಡಕ್ಕೆ ಬಾ; ನೀನು ಈ ಹೊತ್ತು ನನ್ನ ಸಂಗಡ ಊಟಮಾಡಬೇಕು. ನಿನ ಚಿಂತೆಯನ್ನೆಲ್ಲಾ ಪರಿಹರಿಸಿ ನಾಳೆ ಬೆಳಿಗ್ಗೆ ನಿನ್ನನ್ನು ಕಳುಹಿಸಿಕೊಡುವೆನು.</verse>
				<verse number="20">ಮೂರು ದಿವಸಗಳ ಹಿಂದೆ ತಪ್ಪಿಸಿಕೊಂಡ ನಿನ್ನ ಕತ್ತೆಗಳಿಗಾಗಿ ಚಿಂತೆ ಮಾಡಬೇಡ; ಅವು ಈಗಾಗಲೇ ಸಿಕ್ಕಿವೆ. ಮತ್ತು ಇಸ್ರಯೇಲರ ಆಶೋತ್ತರವೆಲ್ಲ ನಿನಗೂ ನಿನ್ನ ಕುಟುಂಬದವರಿಗೂ ಸಲ್ಲುವವಲ್ಲವೇ?” ಎಂದನು.</verse>
				<verse number="21">ಅದಕ್ಕೆ ಸೌಲನು, “ಇಸ್ರಯೇಲ್ ಕುಲಗಳಲ್ಲಿ ಅತ್ಯಲ್ಪವಾಗಿರುವ ಬೆನ್ಯಾಮೀನ್ ಕುಲಕ್ಕೆ ಸೇರಿದವನು ನಾನು; ಮಾತ್ರವಲ್ಲ, ಬೆನ್ಯಾಮೀನ್ಯರ ಎಲ್ಲಾ ಕುಟುಂಬಗಳಲ್ಲಿ ನನ್ನದು ಕನಿಷ್ಠವಾದದ್ದು; ನನಗೆ ಇಂಥ ದೊಡ್ಡ ಮಾತನ್ನು ಏಕೆ ಹೇಳುತ್ತಿರುವಿರಿ?” ಎಂದನು.</verse>
				<verse number="22">ಸಮುವೇಲನು ಸೌಲನನ್ನೂ ಅವನ ಸೇವಕನನ್ನೂ ಮಂಟಪಕ್ಕೆ ಕರೆದುಕೊಂಡು ಹೋದನು. ಬಲಿಭೋಜನಕ್ಕೆ ಬಂದಿದ್ದ ಸುಮಾರು ಮೂವತ್ತು ಜನರಲ್ಲಿ ಅವರಿಬ್ಬರಿಗೂ ಮುಖ್ಯಸ್ಥಾನವನ್ನು ಕೊಟ್ಟನು. ಅನಂತರ ಸಮುವೇಲನು ಅಡಿಗೆಯವನಿಗೆ,</verse>
				<verse number="23">“ನಾನು ನಿನಗೆ ಹೇಳಿ ಪ್ರತ್ಯೇಕವಾಗಿ ಇಡಿಸಿದ್ದ ಮಾಂಸಭಾಗವನ್ನು ತಂದಿಡು,” ಎನ್ನಲು,</verse>
				<verse number="24">ಅವನು ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟನು. ಸಮುವೇಲನು ಸೌಲನಿಗೆ, “ಇಗೋ, ಇದು ನಿನಗಾಗಿ ಪ್ರತ್ಯೇಕಿಸಿದ್ದು; ಇದನ್ನು ತಿನ್ನು. ಜನರನ್ನು ಬಲಿಭೋಜನಕ್ಕೆ ಕರೆದಾಗಿನಿಂದ ಇದು ನಿನಗಾಗಿಯೇ ಪ್ರತ್ಯೇಕವಾಗಿ ಇಡಲಾಗಿತ್ತು,” ಎಂದು ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು.</verse>
				<verse number="25">ಅವರು ಗುಡ್ಡದಿಂದಿಳಿದು ಪಟ್ಟಣಕ್ಕೆ ಬಂದನಂತರ ಸಮುವೇಲನು ಸೌಲನನ್ನು ತನ್ನ ಮನೆಮಾಳಿಗೆಯ ಮೇಲೆ ಕರೆದುಕೊಂಡು ಹೋಗಿ ಅವನೊಡನೆ ಮಾತನಾಡಿದನು.</verse>
				<verse number="26">ಮರುದಿನ ಬೆಳಿಗ್ಗೆ ಸಮುವೇಲನು ಮಾಳಿಗೆಯ ಮೇಲೆ ಮಲಗಿದ್ದ ಸೌಲನನ್ನು, “ಏಳು, ನಿನ್ನನ್ನು ಸಾಗಕಳಿಸುತ್ತೇನೆ,” ಎಂದು ಎಬ್ಬಿಸಲು, ಅವನೆದ್ದನು. ತರುವಾಯ ಅವರು ಇಬ್ಬರೂ ಹೊರಟು ಊರಹೊರಗೆ ಬಂದಾಗ ಸಮುವೇಲನು ಸೌಲನಿಗೆ,</verse>
				<verse number="27">“ನಿನ್ನ ಸೇವಕನನ್ನು ಮುಂದೆ ಕಳುಹಿಸಿ, ನೀನು ಇಲ್ಲೇ ಸ್ವಲ್ಪ ನಿಲ್ಲು; ನಿನಗೆ ತಿಳಿಸಬೇಕಾದ ದೈವೋಕ್ತಿ ಒಂದುಂಟು,” ಎಂದನು.</verse>
			</chapter>
			<chapter number="10">
				<verse number="1">ಆ ಆಳು ಮುಂದೆ ಹೋದಾದ ಮೇಲೆ ಸಮುವೇಲನು ಓಲಿವ್ ಎಣ್ಣೇಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು, ಅವನನ್ನು ಮುದ್ದಿಟ್ಟು ಅವನಿಗೆ, “ಸರ್ವೇಶ್ವರ ತಮ್ಮ ಜನರ ಮೇಲೆ ರಾಜ್ಯ ಆಳಲು ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾರೆ.</verse>
				<verse number="2">ಈ ದಿನ ನೀನು ನನ್ನನ್ನು ಬಿಟ್ಟುಹೋದನಂತರ, ಬೆನ್ಯಾಮೀನ್ಯರ ಮೇರೆಯೊಳಗಿರುವ ರಾಖೇಲಳ ಸಮಾಧಿಯ ಬಳಿಯಲ್ಲಿರುವಂಥ ಚೆಲ್ಚಹಿನಲ್ಲಿ ಇಬ್ಬರು ವ್ಯಕ್ತಿಗಳನ್ನು ಕಾಣುವೆ; ಅವರು, ‘ನೀನು ಹುಡುಕುತ್ತಿರುವ ಕತ್ತೆಗಳು ಸಿಕ್ಕಿದವು; ನಿನ್ನ ತಂದೆ ಕತ್ತೆಗಳ ಚಿಂತೆಬಿಟ್ಟು ನನ್ನ ಮಗನೆಲ್ಲಿ ಹೋದನೋ ಎಂದು ನಿನಗಾಗಿ ಹಂಬಲಿಸುತ್ತಾ ಇರುತ್ತಾರೆ’ ಎಂದು ಹೇಳುವರು.</verse>
				<verse number="3">ನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನಗೆದುರಾಗುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ ಮತ್ತೊಬ್ಬನು ಮೂರು ರೊಟ್ಟಿಗಳನ್ನೂ ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡು ಇರುವರು.</verse>
				<verse number="4">ಅವರು ನಿನ್ನ ಕ್ಷೇಮಸಮಾಚಾರವನ್ನು ವಿಚಾರಿಸಿ ಎರಡು ರೊಟ್ಟಿಗಳನ್ನು ಕೊಡುವರು; ನೀನು ಅವುಗಳನ್ನು ತೆಗೆದುಕೊಳ್ಳಬೇಕು.</verse>
				<verse number="5">ಅಲ್ಲಿಂದ ದೇವಗಿರಿಯನ್ನು ಮುಟ್ಟಿದಾಗ ಫಿಲಿಷ್ಟಿಯರ ದಂಡುಪ್ರದೇಶವನ್ನು ಕಾಣುವೆ; ಮುಂಗಡೆಯಲ್ಲಿ ಸ್ವರಮಂಡಲ, ತಮ್ಮಟೆ, ಕೊಳಲು, ಕಿನ್ನರಿ ಈ ವಾದ್ಯಗಾರರೊಡನೆ ಗುಡ್ಡದಿಂದಿಳಿದು ಬರುತ್ತಿರುವ ಪ್ರವಾದಿಗಳ ಒಂದು ಗುಂಪನ್ನು ಕಾಣುವೆ. ಅವರು ಪರವಶರಾಗಿ ಪ್ರವಾದಿಸುವರು.</verse>
				<verse number="6">ಆಗ ಸರ್ವೇಶ್ವರನ ಆತ್ಮ ನಿನ್ನ ಮೇಲೆ ಬರುವುದು. ನೀನೂ ಮಾರ್ಪಟ್ಟು ಪ್ರವಾದಿಸುವೆ.</verse>
				<verse number="7">ಈ ಗುರುತುಗಳೆಲ್ಲ ಸಂಭವಿಸಿದಾಗ ನಿನಗೆ ಅನುಕೂಲವಿದ್ದ ಹಾಗೆ ವರ್ತಿಸು, ದೇವರು ನಿನ್ನೊಂದಿಗೆ ಇದ್ದಾರೆ!</verse>
				<verse number="8">ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿವಸಗಳಾದ ನಂತರ ನಾನು ದಹನಬಲಿಗಳನ್ನೂ ಶಾಂತಿಸಮಾಧಾನಬಲಿಗಳನ್ನೂ ಸಮರ್ಪಿಸುವುದಕ್ಕಾಗಿ ಅಲ್ಲಿಗೆ ಬಂದು ನೀನು ಮಾಡಬೇಕಾದುದನ್ನು ನಿನಗೆ ತಿಳಿಸುವೆನು; ಅಲ್ಲಿಯವರೆಗೆ ಕಾದುಕೊಂಡಿರು,” ಎಂದು ಹೇಳಿದನು.</verse>
				<verse number="9">ಸೌಲನು ಸಮುವೇಲನನ್ನು ಬಿಟ್ಟು ಹೊರಟ ಕೂಡಲೆ ದೇವರು ಅವನಿಗೆ ನೂತನ ಚೈತನ್ಯವನ್ನು ಕೊಟ್ಟರು. ಅದೇ ದಿನದಲ್ಲಿ ಆ ಎಲ್ಲ ಘಟನೆಗಳು ಸಂಭವಿಸಿದವು.</verse>
				<verse number="10">ಅವನು ದೇವಗಿರಿಗೆ ಬಂದ ಕೂಡಲೆ ಪರವಶರಾದ ಪ್ರವಾದಿಗಳ ಗುಂಪೊಂದು ತನ್ನೆದುರಿಗೆ ಬರುವುದನ್ನು ಕಂಡನು. ದೇವರ ಆತ್ಮ ಅವನ ಮೇಲೆ ಇಳಿದು ಬಂದುದರಿಂದ ಅವನೂ ಪರವಶನಾಗಿ ಅವರೊಳಗೆ ಸೇರಿ ಪ್ರವಾದಿಸಿದನು.</verse>
				<verse number="11">ಅವನು ಪರವಶನಾಗಿ ಮಾತಾಡುವುದನ್ನು ಪರಿಚಿತರು ಕಂಡು ತಮ್ಮತಮ್ಮೊಳಗೆ, “ಕೀಷನ ಮಗನಿಗೆ ಏನಾಯಿತು? ಸೌಲನೂ ಪ್ರವಾದಿಗಳಲ್ಲಿ ಒಬ್ಬನೆ?” ಎಂದು ಮಾತಾಡಿಕೊಳ್ಳುತ್ತಿದ್ದರು.</verse>
				<verse number="12">ಆಗ ಆ ಸ್ಥಳೀಯರಲ್ಲಿ ಒಬ್ಬನು, “ಹಾಗಾದರೆ ಇವರ ತಂದೆ ಯಾರು?” ಎಂದು ಕೇಳಿದನು. ಈ ಘಟನೆಯಿಂದಾಗಿ, “ಏನು, ಸೌಲನೂ ಪ್ರವಾದಿಯಾಗಿಬಿಟ್ಟನೊ?” ಎಂಬ ಗಾದೆ ಹುಟ್ಟಿತು.</verse>
				<verse number="13">ಅವನು ಪ್ರವಾದಿಸಿ ಆದ ಮೇಲೆ ಪೂಜಾಸ್ಥಳಕ್ಕೆ ಬಂದನು.</verse>
				<verse number="14">ಸೌಲನ ಚಿಕ್ಕಪ್ಪನು ಅವನನ್ನೂ ಅವನ ಸೇವಕನನ್ನೂ ನೋಡಿ, “ನೀವು ಎಲ್ಲಿಗೆ ಹೋಗಿದ್ದಿರಿ?” ಎಂದು ಕೇಳಿದನು. ಅವನು, “ಕತ್ತೆಗಳನ್ನು ಹುಡುಕುವುದಕ್ಕೆ ಹೋಗಿದ್ದೆವು. ಅವು ಸಿಕ್ಕಲಿಲ್ಲ. ಆದುದರಿಂದ ಸಮುವೇಲನ ಬಳಿಗೆ ಹೋದೆವು,” ಎಂದನು.</verse>
				<verse number="15">ಸಮುವೇಲನು ಏನು ಹೇಳಿದನೆಂದು ಚಿಕ್ಕಪ್ಪನು ಕೇಳಲು,</verse>
				<verse number="16">ಸೌಲನು, “ಕತ್ತೆಗಳು ಸಿಕ್ಕಿದವೆಂದು ತಿಳಿಸಿದನು,” ಎಂಬುದಾಗಿ ಹೇಳಿದನೇ ಹೊರತು ಸಮುವೇಲನು ಹೇಳಿದ ಆ ರಾಜ್ಯಭಾರದ ಮಾತನ್ನು ತಿಳಿಸಲಿಲ್ಲ.</verse>
				<verse number="17">ಸಮುವೇಲನು ಇಸ್ರಯೇಲರನ್ನು ಮಿಚ್ಪೆಗೆ ಕರೆಯಿಸಿ ಸರ್ವೇಶ್ವರನ ಸನ್ನಿಧಿಯಲ್ಲಿ ಸಭೆ ಸೇರಿಸಿದನು.</verse>
				<verse number="18">ಅವರಿಗೆ, “ಇಸ್ರಯೇಲ್ ದೇವರಾದ ಸರ್ವೇಶ್ವರ ಹೇಳುವುದನ್ನು ಕೇಳಿರಿ: ‘ನೀವು ಈಜಿಪ್ಟಿನವರ ಕೈಯಿಂದ ತಪ್ಪಿಸಿಕೊಳ್ಳುವಂತೆ ನಿಮ್ಮನ್ನು ಅವರ ದೇಶದಿಂದ ಬಿಡಿಸಿದವನು ಹಾಗು ಬಾಧಿಸುತ್ತಿದ್ದ ಬೇರೆ ಎಲ್ಲಾ ಜನಾಂಗಗಳಿಂದ ನಿಮ್ಮನ್ನು ರಕ್ಷಿಸಿದವನು ನಾನೇ.</verse>
				<verse number="19">ನೀವಾದರೋ, ನಿಮ್ಮನ್ನು ಕಷ್ಟಸಂಕಟಗಳಿಂದ ಬಿಡಿಸಿದ ನಿಮ್ಮ ದೇವರಾದ ನನ್ನನ್ನು ತಿರಸ್ಕರಿಸಿ ಈಗ ನಮಗೊಬ್ಬ ಅರಸನನ್ನು ನೇಮಿಸೆಂದು ಕೇಳುತ್ತೀರಿ. ಆದುದರಿಂದ ನೀವು ನಿಮ್ಮ ನಿಮ್ಮ ಕುಲ ಹಾಗು ಗೋತ್ರಗಳ ಅನುಸಾರ ಸರ್ವೇಶ್ವರನ ಸನ್ನಿಧಿಯಲ್ಲಿ ಹಾಜರಾಗಿರಿ,” ಎಂದು ಅಪ್ಪಣೆ ಮಾಡಿದನು.</verse>
				<verse number="20">ಹೀಗೆ ಸಮುವೇಲನು ಇಸ್ರಯೇಲರ ಎಲ್ಲಾ ಕುಲಗಳನ್ನು ಸಮೀಪಕ್ಕೆ ಕರೆದಾಗ ಬೆನ್ಯಾಮೀನ್ ಕುಲಕ್ಕೆ ಚೀಟು ಬಿದ್ದಿತು.</verse>
				<verse number="21">ಆ ಕುಲದ ಗೋತ್ರಗಳನ್ನು ಬರಮಾಡಿದಾಗ ಮಟ್ರಿಯ ಗೋತ್ರದಲ್ಲಿ ಕೀಷನ ಮಗನಾದ ಸೌಲನಿಗೆ ಚೀಟು ಬಿದ್ದಿತು. ಅವನನ್ನು ಹುಡುಕಲು ಅವನು ಸಿಕ್ಕಲಿಲ್ಲ.</verse>
				<verse number="22">ಅವರು, “ಆ ವ್ಯಕ್ತಿ ಇಲ್ಲಿಗೆ ಬರುವನೋ?” ಎಂದು ಸರ್ವೇಶ್ವರನನ್ನು ವಿಚಾರಿಸಿದಾಗ, “ಬಂದಿದ್ದಾನೆ; ಇಗೋ, ಸರಕು ಸಾಮಾನುಗಳ ನಡುವೆ ಅಡಗಿಕೊಂಡಿದ್ದಾನೆ,” ಎಂದು ಉತ್ತರ ಬಂದಿತು.</verse>
				<verse number="23">ಅವರು ತಟ್ಟನೆ ಹೋಗಿ ಅವನನ್ನು ಹಿಡಿದುಕೊಂಡು ಬಂದು ಜನರ ಮಧ್ಯೆ ನಿಲ್ಲಿಸಿದರು. ಎಲ್ಲ ಜನರ ಗುಂಪಿನಲ್ಲಿ ಅವನ ಹೆಗಲೂ ತಲೆಯೂ ಕಾಣುವಷ್ಟು ಬಹು ಎತ್ತರದ ವ್ಯಕ್ತಿ ಅವನಾಗಿದ್ದನು.</verse>
				<verse number="24">ಆಗ ಸಮುವೇಲನು ಜನರೆಲ್ಲರಿಗೆ, “ನೋಡಿ, ಸರ್ವೇಶ್ವರನಿಂದ ಆಯ್ಕೆಯಾದವನು ಇವನೇ; ಸರ್ವಜನರಲ್ಲಿ ಇವನಿಗೆ ಸಮಾನರು ಇಲ್ಲವೇ ಇಲ್ಲ,” ಎಂದನು. ಜನರೆಲ್ಲರೂ, “ಅರಸನಿಗೆ ಜಯವಾಗಲಿ!” ಎಂದು ಘೋಷಿಸಿದರು.</verse>
				<verse number="25">ತರುವಾಯ ಸಮುವೇಲನು ಜನರಿಗೆ ರಾಜನೀತಿಯನ್ನು ಬೋಧಿಸಿ, ಅದನ್ನು ಒಂದು ಪುಸ್ತಕದಲ್ಲಿ ಬರೆದು, ಸರ್ವೇಶ್ವರನ ಸನ್ನಿಧಿಯಲ್ಲಿಟ್ಟನು; ಆಮೇಲೆ ಜನರನ್ನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.</verse>
				<verse number="26">ಸೌಲನೂ ಗಿಬೆಯದಲ್ಲಿದ್ದ ತನ್ನ ಮನೆಗೆ ಹೋದನು. ಕೆಲವು ಮಂದಿ ಶೂರರು ದೇವರಿಂದ ಪ್ರೇರಿತರಾಗಿ ಅವನ ಜೊತೆಯಲ್ಲೇ ಹೋದರು.</verse>
				<verse number="27">ಕೆಲವು ಮಂದಿ ಪುಂಡುಪೋಕರು, “ಇವನೇನೋ ನಮ್ಮನ್ನು ರಕ್ಷಿಸುವವನು!” ಎಂದು ತಾತ್ಸಾರಮಾಡಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.</verse>
			</chapter>
			<chapter number="11">
				<verse number="1">ಒಂದು ತಿಂಗಳ ನಂತರ ಅಮ್ಮೋನಿಯನಾದ ನಾಹಾಷನು ದಂಡೆತ್ತಿ ಬಂದು ಯಾಬೇಷ್ ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯಾಬೇಷಿನವರು ಅವನನ್ನು, “ನೀನು ನಮ್ಮ ಸಂಗಡ ಸಂಧಾನ ಮಾಡಿಕೋ; ನಾವು ನಿನಗೆ ಅಧೀನರಾಗಿರುತ್ತೇವೆ,” ಎಂದು ಬೇಡಿಕೊಂಡರು.</verse>
				<verse number="2">ಅದಕ್ಕೆ ಅವನು, “ಇಸ್ರಯೇಲರೆಲ್ಲರನ್ನು ಅವಮಾನಪಡಿಸುವುದಕ್ಕಾಗಿ ನಾನು ಮೊದಲು ನಿಮ್ಮಲ್ಲಿ ಪ್ರತಿಯೊಬ್ಬರ ಬಲಗಣ್ಣನ್ನು ಕಿತ್ತು ಹಾಕುತ್ತೇನೆ. ಇದಕ್ಕೆ ನೀವು ಒಪ್ಪುವಿರಾದರೆ ನಿಮ್ಮ ಸಂಗಡ ಸಂಧಾನ ಮಾಡಿಕೊಳ್ಳುತ್ತೇನೆ,” ಎಂದು ಉತ್ತರಕೊಟ್ಟನು.</verse>
				<verse number="3">ಆಗ ಯಾಬೇಷಿನ ಹಿರಿಯರು ಅವನಿಗೆ, “ಏಳು ದಿವಸಗಳವರೆಗೆ ಸಮಯ ಕೊಡು; ಅಷ್ಟರೊಳಗೆ ನಾವು ಇಸ್ರಯೇಲರ ಪ್ರಾಂತ್ಯಗಳಿಗೆ ದೂತರನ್ನು ಕಳುಹಿಸುತ್ತೇವೆ. ನಮ್ಮನ್ನು ಯಾರೂ ರಕ್ಷಿಸದಿದ್ದರೆ ನಾವು ನಿನ್ನ ಬಳಿಗೆ ಬಂದು ಶರಣಾಗುತ್ತೇವೆ,” ಎಂದು ವಿನಂತಿಸಿದರು.</verse>
				<verse number="4">ದೂತರು ಸೌಲನು ವಾಸವಾಗಿದ್ದ ಗಿಬೆಯಕ್ಕೆ ಬಂದು ಅಲ್ಲಿನವರಿಗೆ ಈ ವರ್ತಮಾನವನ್ನು ತಿಳಿಸಿದರು. ಎಲ್ಲರೂ ಗಟ್ಟಿಯಾಗಿ ಅಳತೊಡಗಿದರು.</verse>
				<verse number="5">ಅಷ್ಟರಲ್ಲಿ ಸೌಲನು ಹೊಲದಿಂದ ದನಗಳನ್ನು ಹೊಡೆದುಕೊಂಡು ಬಂದನು. ಜನರು ಗೋಳಾಡುವುದಕ್ಕೇನು ಕಾರಣವೆಂದು ಕೇಳಲು ಯಾಬೇಷಿನವರ ವರ್ತಮಾನವನ್ನು ಅವನಿಗೆ ತಿಳಿಸಲಾಯಿತು.</verse>
				<verse number="6">ಆಗ ಸರ್ವೇಶ್ವರನ ಆತ್ಮ ಅವನ ಮೇಲೆ ಬಂದಿತು. ಅವನು ಅತ್ಯಂತ ಕುಪಿತನಾದನು.</verse>
				<verse number="7">ಒಂದು ಜೋಡಿ ಎತ್ತುಗಳನ್ನು ತೆಗೆದುಕೊಂಡು ತುಂಡುತುಂಡು ಮಾಡಿ, ಆ ತುಂಡುಗಳನ್ನು ದೂತರ ಮುಖಾಂತರ ಇಸ್ರಯೇಲರ ಎಲ್ಲ ಪ್ರಾಂತ್ಯಗಳಿಗೆ ಕಳುಹಿಸಿದನು. “ಯಾರು ಸೌಲ ಹಾಗು ಸಮುವೇಲರನ್ನು ಹಿಂಬಾಲಿಸುವುದಿಲ್ಲವೋ ಅವರ ಎತ್ತುಗಳನ್ನು ಹೀಗೆಯೇ ಕಡಿಯಲಾಗುವುದು,” ಎಂದು ಹೇಳಿಸಿದನು. ಸರ್ವೇಶ್ವರನ ಭಯಭಕ್ತಿಯಿಂದ ಪ್ರೇರಿತರಾದ ಜನರೆಲ್ಲರೂ ಏಕಮನಸ್ಸಿನಿಂದ ಕೂಡಿಬಂದರು.</verse>
				<verse number="8">ಅವರನ್ನು ಬೆಜೆಕಿನಲ್ಲಿ ಕ್ರಮಪಡಿಸಿ ಲೆಕ್ಕಿಸಿದಾಗ ಇಸ್ರಯೇಲರಲ್ಲಿ ಮೂರು ಲಕ್ಷ ಸೈನಿಕರೂ ಯೆಹೂದ್ಯರಲ್ಲಿ ಮೂವತ್ತು ಸಾವಿರ ಸೈನಿಕರೂ ಇದ್ದರು.</verse>
				<verse number="9">ಬಂದಿದ್ದ ದೂತರಿಗೆ, “ನಾಳೆ ಮಧ್ಯಾಹ್ನದೊಳಗೆ ನಿಮಗೆ ಸಹಾಯ ಸಿಕ್ಕುವುದೆಂದು ಯಾಬೇಷ್ ಗಿಲ್ಯಾದಿನವರಿಗೆ ತಿಳಿಸಿರಿ,” ಎಂದು ಹೇಳಿ ಅವರನ್ನು ಕಳುಹಿಸಲಾಯಿತು.</verse>
				<verse number="10">ದೂತರು ಹೋಗಿ ಈ ವರ್ತಮಾನವನ್ನು ತಿಳಿಸಲು ಯಾಬೇಷಿನವರು ಸಂತೋಷಭರಿತರಾದರು. ಅಮ್ಮೋನಿಯರಿಗೆ, “ನಾವು ನಾಳೆ ನಿಮ್ಮ ಬಳಿಗೆ ಬರುವೆವು; ನಿಮ್ಮ ಇಚ್ಛೆಯ ಪ್ರಕಾರ ಮಾಡಬಹುದು,” ಎಂದು ಹೇಳಿದರು.</verse>
				<verse number="11">ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಪಂಗಡವಾಗಿ ವಿಂಗಡಿಸಿದನು. ಅಮ್ಮೋನಿಯರ ಪಾಳೆಯದೊಳಕ್ಕೆ ನುಗ್ಗಿ ದಾಳಿಮಾಡಿ ಮಧ್ಯಾಹ್ನದವರೆಗೆ ಅವರನ್ನು ಸದೆಬಡಿದನು. ಅಳಿದುಳಿದವರನ್ನು ಒಬ್ಬರನ್ನೊಬ್ಬರು ಕೂಡದ ಹಾಗೆ ಚದರಿಸಿಬಿಟ್ಟನು.</verse>
				<verse number="12">ತರುವಾಯ ಜನರು ಸಮುವೇಲನಿಗೆ, “ಸೌಲನು ನಮಗೆ ಅರಸನಾಗಬಾರದೆಂದು ಹೇಳಿದವರಾರು? ಅವರನ್ನು ನಮಗೆ ಒಪ್ಪಿಸಿರಿ; ನಾವೇ ಕೊಂದುಹಾಕುತ್ತೇವೆ,” ಎಂದರು. ಸೌಲನು ಅವರಿಗೆ,</verse>
				<verse number="13">“ಸರ್ವೇಶ್ವರ ಈ ದಿನ ಇಸ್ರಯೇಲರಿಗೆ ಜಯವನ್ನುಂಟುಮಾಡಿರುವರು. ಆದ್ದರಿಂದ ಯಾರನ್ನೂ ಕೊಲ್ಲಬಾರದು,” ಎಂದು ಹೇಳಿದನು.</verse>
				<verse number="14">ಸಮುವೇಲನು ಜನರಿಗೆ, “ಬನ್ನಿ, ಗಿಲ್ಗಾಲಿಗೆ ಹೋಗಿ ಸೌಲನ ಅರಸುತನವನ್ನು ಘೋಷಿಸೋಣ,” ಎಂದನು.</verse>
				<verse number="15">ಅವರೆಲ್ಲರು ಅಲ್ಲಿಗೆ ಹೋಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಸೌಲನ ಅರಸುತನವನ್ನು ಘೋಷಿಸಿ ಸ್ಥಿರಪಡಿಸಿದರು. ಸರ್ವೇಶ್ವರನಿಗೆ ಶಾಂತಿಸಮಾಧಾನದ ಬಲಿಗಳನ್ನು ಸಮರ್ಪಿಸಿದರು. ಸೌಲನೊಡನೆ ಸೇರಿ ಬಹಳವಾಗಿ ಆನಂದಿಸಿದರು.</verse>
			</chapter>
			<chapter number="12">
				<verse number="1">ಸಮುವೇಲನು ಇಸ್ರಯೇಲರೆಲ್ಲರಿಗೆ, “ನೋಡಿ, ನಾನು ನಿಮ್ಮ ಬಿನ್ನಹಗಳನ್ನು ಆಲಿಸಿ, ನಿಮಗೊಬ್ಬ ಅರಸನನ್ನು ನೇಮಿಸಿದೆ.</verse>
				<verse number="2">ಇನ್ನು ಇವನೇ ನಿಮ್ಮನ್ನು ಮುನ್ನಡೆಸುವನು. ಚಿಕ್ಕಂದಿನಿಂದ ನಿಮ್ಮ ನಾಯಕನಾಗಿದ್ದ ನಾನು ಈಗ ತಲೆನರೆತ ಮುದುಕನಾಗಿದ್ದೇನೆ; ನನ್ನ ಮಕ್ಕಳು ನಿಮ್ಮ ಮಧ್ಯದಲ್ಲಿದ್ದಾರೆ.</verse>
				<verse number="3">ಇಲ್ಲಿ ನಿಂತುಕೊಂಡಿರುವ ನಾನು, ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರು ವಂಚಿಸಿ ಪೀಡಿಸಿದ್ದುಂಟೋ? ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಕೊಟ್ಟಿದ್ದುಂಟೋ? ಹಾಗೇನಾದರು ಮಾಡಿದ್ದರೆ ಸರ್ವೇಶ್ವರನ ಹಾಗು ಅವರ ಅಭಿಷಿಕ್ತನ ಮುಂದೆ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ,” ಎಂದನು.</verse>
				<verse number="4">ಅವರು, “ಇಲ್ಲ, ನೀವು ನಮ್ಮನ್ನು ವಂಚಿಸಿ ಪೀಡಿಸಿ ನಮ್ಮಿಂದ ಏನೂ ಕಸಿದುಕೊಂಡಿಲ್ಲ,” ಎಂದು ಉತ್ತರಕೊಟ್ಟರು.</verse>
				<verse number="5">ಸಮುವೇಲನು ಪುನಃ, “ನೀವು ನನ್ನಲ್ಲಿ ಇಂಥದನ್ನೇನೂ ಕಾಣಲಿಲ್ಲವೆಂಬುದಕ್ಕೆ ಸರ್ವೇಶ್ವರ ಹಾಗು ಅವರ ಅಭಿಷಿಕ್ತನು ಸಾಕ್ಷಿಯಾಗಿದ್ದಾರೆ,” ಎಂದನು. ಅವರು, “ಹೌದು, ಸರ್ವೇಶ್ವರ ಸಾಕ್ಷಿ ಆಗಿದ್ದಾರೆ,” ಎಂದು ನುಡಿದರು.</verse>
				<verse number="6">ಆಗ ಸಮುವೇಲನು, “ನಿಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಕರೆದುತರುವುದಕ್ಕಾಗಿ ಮೋಶೆ ಹಾಗು ಆರೋನರನ್ನು ನೇಮಿಸಿದ ಸರ್ವೇಶ್ವರಸ್ವಾಮಿಯೇ ಇದಕ್ಕೆ ಸಾಕ್ಷಿ: ಇಲ್ಲಿ ನಿಂತುಕೊಳ್ಳಿರಿ:</verse>
				<verse number="7">ಸರ್ವೇಶ್ವರ ನಿಮ್ಮ ಹಾಗು ನಿಮ್ಮ ಪೂರ್ವಜರ ಪರವಾಗಿ ನಡೆಸಿದ ನೀತಿಕಾರ್ಯಗಳನ್ನು ಕುರಿತು ಅವರೆದುರಿನಲ್ಲೇ ನಿಮಗೆ ನೆನಪಿಗೆ ತಂದು, ನಿಮ್ಮನ್ನು ಎಚ್ಚರಿಸುತ್ತೇನೆ.</verse>
				<verse number="8">ಈಜಿಪ್ಟಿಗೆ ಬಂದ ಯಕೋಬನ ವಂಶದವರಾದ ನಮ್ಮ ಹಿರಿಯರು ಸರ್ವೇಶ್ವರನಿಗೆ ಮೊರೆಯಿಟ್ಟಾಗ, ಅವರು ಮೋಶೆ ಹಾಗು ಆರೋನರ ಮುಖಾಂತರ ಅವರನ್ನು ಈಜಿಪ್ಟಿನಿಂದ ಬಿಡಿಸಿ ತಂದು ಈ ನಾಡಿನಲ್ಲಿ ನೆಲೆಗೊಳಿಸಿದರು.</verse>
				<verse number="9">ಅವರು ತಮ್ಮ ದೇವರಾದ ಸರ್ವೇಶ್ವರನನ್ನು ಮರೆತುಬಿಟ್ಟರು. ಆಗ ಅವರನ್ನು ಹಾಚೋರಿನ ಸೇನಾಪತಿಯಾದ ಸೀಸೆರನಿಗೂ ಫಿಲಿಷ್ಟಿಯರಿಗೂ ಮೋವಾಬ್ ರಾಜನಿಗೂ ಮಾರಿಬಿಡಲಾಯಿತು. ಇವರು ದಂಡೆತ್ತಿ ಬಂದು ಅವರೊಡನೆ ಯುದ್ಧಮಾಡಿದರು.</verse>
				<verse number="10">ಆಗ ಅವರು, “ನಾವು ಸರ್ವೇಶ್ವರನಾದ ನಿಮ್ಮನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸಿರಿ; ನಾವು ಇನ್ನು ಮುಂದೆ ನಿಮ್ಮನ್ನೇ ಪೂಜಿಸಿ, ಸೇವೆಮಾಡುತ್ತೇವೆ,” ಎಂದು ಮೊರೆಯಿಟ್ಟರು.</verse>
				<verse number="11">ಆಗ ಸರ್ವೇಶ್ವರ ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.</verse>
				<verse number="12">ಅಮ್ಮೋನಿಯರ ಅರಸನಾದ ನಾಹಾಷನು ನಿಮ್ಮ ಮೇಲೆ ಯುದ್ಧಕ್ಕೆ ಬರುತ್ತಾನೆಂದು ನಿಮಗೆ ಗೊತ್ತಾಗಲು, ನಿಮ್ಮ ದೇವರಾದ ಸರ್ವೆಶ್ವರ ನಿಮ್ಮ ಅರಸನಾಗಿದ್ದರೂ ನೀವು, ‘ನಮಗೊಬ್ಬ ಅರಸನನ್ನು ನೇಮಿಸು’ ಎಂದು ನನ್ನನ್ನು ಬೇಡಿಕೊಂಡಿರಿ.</verse>
				<verse number="13">“ಇಗೋ, ನೀವು ಅಪೇಕ್ಷಿಸಿ ಆರಿಸಿಕೊಂಡ ಅರಸ ಇವನೇ; ಸರ್ವೇಶ್ವರ ಇವನನ್ನು ನಿಮ್ಮ ಮೇಲೆ ಅರಸನನ್ನಾಗಿ ನೇಮಿಸಿದ್ದಾರೆ.</verse>
				<verse number="14">ನೀವೂ ನಿಮ್ಮ ಅರಸನೂ ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ಅವರಿಗೆ ವಿಧೇಯರಾಗಿ ಅವರನ್ನೇ ಪೂಜಿಸಿರಿ; ಅವರ ಮಾತನ್ನು ತಪ್ಪದೆ ಪಾಲಿಸುತ್ತಾ ಅವರನ್ನೇ ಹೊಂದಿಕೊಂಡಿರಿ. ಹೀಗೆ ಮಾಡಿದರೆ ಎಷ್ಟೋ ಒಳ್ಳೆಯದು.</verse>
				<verse number="15">ಆದರೆ ನೀವು ಸರ್ವೆಶ್ವರನ ಮಾತನ್ನು ಕೇಳದೆ, ಅವರ ಆಜ್ಞೆಗಳನ್ನು ಕೈಕೊಳ್ಳದೆ ನಡೆದರೆ, ಅವರ ಹಸ್ತ ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು.</verse>
				<verse number="16">ಈಗ ಸರ್ವೇಶ್ವರ ನಿಮ್ಮ ಕಣ್ಮುಂದೆಯೇ ಮಾಡುವ ಮಹತ್ಕಾರ್ಯವನ್ನು ಹತ್ತಿರಬಂದು ನೋಡಿರಿ.</verse>
				<verse number="17">ನಾನು ಸರ್ವೇಶ್ವರನಿಗೆ ಮೊರೆಯಿಡುತ್ತೇನೆ; ಈಗ ಗೋದಿಯ ಸುಗ್ಗಿಕಾಲವಾಗಿದ್ದರೂ ಗುಡುಗನ್ನೂ ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತಮ್ಮ ದೃಷ್ಟಿಯಲ್ಲಿ ಎಷ್ಟೋ ಕೆಟ್ಟದ್ದಾಗಿದೆ ಎಂಬುದನ್ನು ಅವರು ತೋರಿಸಿಕೊಡುವರು,” ಎಂದು ಅವರಿಗೆ ಹೇಳಿದನು.</verse>
				<verse number="18">ಅಂತೆಯೇ ಸಮುವೇಲನು ಮೊರೆ ಇಡಲು ಸರ್ವೇಶ್ವರ ಗುಡುಗು ಮಳೆಗಳನ್ನು ಕಳುಹಿಸಿದರು. ಜನರೆಲ್ಲರು ಸರ್ವೇಶ್ವರನಿಗೂ ಸಮುವೇಲನಿಗೂ ಬಹಳವಾಗಿ ಭಯಪಟ್ಟು,</verse>
				<verse number="19">ಸಮುವೇಲನನ್ನು, “ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದ್ದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪ ಕೂಡಿತು; ಆದುದರಿಂದ ನಿಮ್ಮ ಸೇವಕರಾದ ನಾವು ಸಾಯದಂತೆ ನಿಮ್ಮ ದೇವರಾದ ಸರ್ವೇಶ್ವರನನ್ನು ಬೇಡಿಕೊಳ್ಳಿ,” ಎಂದು ಸಮುವೇಲನನ್ನು ವಿಜ್ಞಾಪಿಸಿದರು.</verse>
				<verse number="20">ಆಗ ಸಮುವೇಲನು, “ಭಯಪಡಬೇಡಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆ ಆದರೂ ಅದನ್ನು ಬಿಟ್ಟು, ಸರ್ವೇಶ್ವರನನ್ನು ಹೊಂದಿಕೊಂಡು ಪೂರ್ಣಮನಸ್ಸಿನಿಂದ ಅವರೊಬ್ಬರನ್ನೇ ಪೂಜಿಸಿರಿ.</verse>
				<verse number="21">ದೇವರಲ್ಲದವುಗಳನ್ನು ಹಿಂಬಾಲಿಸಬೇಡಿ; ಅವುಗಳಿಂದ ನಿಮಗೆ ಲಾಭವಿಲ್ಲ; ರಕ್ಷಣೆಯೂ ಸಿಕ್ಕುವುದಿಲ್ಲ. ಅವು ವ್ಯರ್ಥವಾದವುಗಳೇ ಸರಿ.</verse>
				<verse number="22">ಸರ್ವೇಶ್ವರನ ದಯೆ ನಿಮ್ಮನ್ನು ಸ್ವಕೀಯ ಜನರನ್ನಾಗಿ ಆರಿಸಿಕೊಂಡ ಮೇಲೆ, ಅವರು ತಮ್ಮ ಮಹೋನ್ನತ ನಾಮದ ನಿಮಿತ್ತ, ನಿಮ್ಮನ್ನು ಖಂಡಿತವಾಗಿ ಕೈಬಿಡುವುದಿಲ್ಲ.</verse>
				<verse number="23">ನಾನಾದರೋ ನಿಮ್ಮ ಪರವಾಗಿ ಸರ್ವೇಶ್ವರನನ್ನು ಪ್ರಾರ್ಥಿಸುತ್ತೇನೆ; ಅವರ ನೀತಿಯುತ ಉತ್ತಮ ಮಾರ್ಗವನ್ನು ನಿಮಗೆ ತೋರಿಸಿಕೊಡುವುದನ್ನು ಬಿಡುವುದಿಲ್ಲ; ಬಿಟ್ಟರೆ ದೇವರ ದೃಷ್ಟಿಯಲ್ಲಿ ನಾನೂ ಪಾಪಿಯಾಗುತ್ತೇನೆ.</verse>
				<verse number="24">ನೀವಾದರೋ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಅವರು ನಿಮಗಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಅವರಿಗೆ ಶ್ರದ್ಧೆಯಿಂದಲೂ ಪೂರ್ಣಮನಸ್ಸಿನಿಂದಲೂ ಸೇವೆಸಲ್ಲಿಸುತ್ತಾ ಬರಬೇಕು.</verse>
				<verse number="25">ನೀವು ದ್ರೋಹಿಗಳಾಗಿಯೇ ಇದ್ದರೆ ನಿಮ್ಮ ಅರಸನ ಸಮೇತ ನಾಶವಾಗುವಿರಿ,” ಎಂದು ಹೇಳಿದನು.</verse>
			</chapter>
			<chapter number="13">
				<verse number="1">ಸೌಲನು ಅರಸನಾದಾಗ ಅವನಿಗೆ ಮೂವತ್ತು ವರ್ಷ. ಅವನು ಇಸ್ರಯೇಲರನ್ನು ನಾಲ್ವತ್ತೆರಡು ವರ್ಷ ಆಳಿದನು.</verse>
				<verse number="2">ಅವನು ಅವರಲ್ಲಿ ಮೂರು ಸಾವಿರ ಜನರನ್ನು ಮಿಕ್ಮಾಷಿನಲ್ಲೂ ಬೇತೇಲಿನ ಗುಡ್ಡದಲ್ಲೂ ಇಟ್ಟುಕೊಂಡನು. ಉಳಿದ ಸಾವಿರ ಜನರನ್ನು ಬೆನ್ಯಾಮೀನ್ಯರ ಗೆಬೆಯದಲ್ಲಿದ್ದ ಯೋನಾತಾನನ ವಶಕ್ಕೆ ಕೊಟ್ಟನು. ಬೇರೆ ಇಸ್ರಯೇಲರನ್ನು ಅವರವರ ಮನೆಗಳಿಗೆ ಕಳುಹಿಸಿದನು.</verse>
				<verse number="3">ಯೋನಾತಾನನು ಗೆಬದಲ್ಲಿದ್ದ ಫಿಲಿಷ್ಟಿಯರ ದಂಡುಪ್ರದೇಶವನ್ನು ನಾಶಮಾಡಿದನು. ಈ ಸಮಾಚಾರ ಫಿಲಿಷ್ಟಿಯರಿಗೆ ಮುಟ್ಟಿತು. ಹಿಬ್ರಿಯರೆಲ್ಲರಿಗೂ ಇದು ಗೊತ್ತಾಗುವಂತೆ ಸೌಲನು ದೇಶದಲ್ಲೆಲ್ಲಾ ಕೊಂಬೂದಿಸಿದನು.</verse>
				<verse number="4">ಸೌಲನು ಫಿಲಿಷ್ಟಿಯರ ದಂಡುಪ್ರದೇಶವನ್ನು ನಾಶಮಾಡಿದ್ದರಿಂದ, ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಯೇಲರು ತಿಳಿದು, ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.</verse>
				<verse number="5">ಆಗ ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಮೂವತ್ತು ಸಾವಿರ ರಥಬಲವನ್ನು, ಆರು ಸಾವಿರ ಅಶ್ವಬಲವನ್ನು ಹಾಗು ಸಮುದ್ರದ ಮರಳಿನಂತೆ ಅಸಂಖ್ಯವಾದ ಕಾಲಾಳುಗಳನ್ನು ತೆಗೆದುಕೊಂಡು ಬಂದು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಪಾಳೆಯ ಮಾಡಿಕೊಂಡರು.</verse>
				<verse number="6">ಇಸ್ರಯೇಲರಿಗೆ ಕೇಡು ಬಂದೊದಗಿತು. ತಾವು ಇಕ್ಕಟ್ಟಿನಲ್ಲಿ ಇದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.</verse>
				<verse number="7">ಕೆಲವರು ಜೋರ್ಡನ್ ನದಿ ದಾಟಿ ಗಾದ್ಯರ ದೇಶಕ್ಕೂ ಗಿಲ್ಯಾದ್ ಪ್ರಾಂತ್ಯಕ್ಕೂ ಹೊರಟುಹೋದರು. ಸೌಲನು ಇನ್ನೂ ಗಿಲ್ಗಾಲಿನಲ್ಲೇ ಇದ್ದನು. ಅವನ ಸಂಗಡ ಇದ್ದವರು ಭಯದಿಂದ ನಡುಗುತ್ತಿದ್ದರು.</verse>
				<verse number="8">ಸೌಲನು ಸಮುವೇಲನ ಆಜ್ಞೆಯಂತೆ ಗಿಲ್ಗಾಲಿನಲ್ಲೇ ಏಳು ದಿವಸ ಇದ್ದರೂ ಸಮುವೇಲನು ಅಲ್ಲಿಗೆ ಬರಲಿಲ್ಲ; ಅಷ್ಟರಲ್ಲಿ ಜನರು ಚದರಿಹೋದರು.</verse>
				<verse number="9">ಆಗ ಸೌಲನು ಜನರಿಂದ ದಹನಬಲಿಗೆ ಹಾಗು ಶಾಂತಿಸಮಾಧಾನ ಬಲಿಗೆ ಬೇಕಾದದ್ದನ್ನು ತರಿಸಿ ದಹನಬಲಿಯನ್ನು ಅರ್ಪಿಸಿದನು.</verse>
				<verse number="10">ಅದು ಮುಗಿಯುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸುವುದಕ್ಕಾಗಿ ಮುಂದೆ ಹೋದನು.</verse>
				<verse number="11">ಸಮುವೇಲನು, ಅವನನ್ನು ನೋಡಿ, “ಇದೇನು ನೀನು ಮಾಡಿದ್ದು?” ಎಂದು ಕೇಳಿದನು. ಅವನು, “ಜನರು ಚದರಿಹೋಗುವುದನ್ನು, ನೀವು ನಿಯಮಿತಕಾಲಕ್ಕೆ ಬಾರದಿರುವುದನ್ನು ಹಾಗು ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ನಮಗೆ ವಿರೋಧವಾಗಿ ಕೂಡಿಕೊಂಡಿರುವುದನ್ನು ನೋಡಿದೆ;</verse>
				<verse number="12">ಸರ್ವೇಶ್ವರನಿಗೆ ಶಾಂತಿಸಮಾಧಾನದ ಬಲಿಯನ್ನು ಸಲ್ಲಿಸುವುದಕ್ಕಿಂತ ಮೊದಲೇ ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ಬಿದ್ದಾರೆಂದು ಭಯಪಟ್ಟೆ. ಆದುದರಿಂದ ದಹನಬಲಿಯನ್ನು ಸಮರ್ಪಿಸುವುದಕ್ಕೆ ನಾನೇ ಮುಂದಾದೆ,” ಎಂದನು.</verse>
				<verse number="13">ಆಗ ಸಮುವೇಲನು, “ನೀನು ಬುದ್ಧಿಹೀನ ಕಾರ್ಯವನ್ನು ಮಾಡಿದೆ; ನಿನ್ನ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಕೈಗೊಳ್ಳಲಿಲ್ಲ. ಕೈಗೊಂಡಿದ್ದರೆ ನಿನ್ನ ರಾಜ್ಯವನ್ನು ಇಸ್ರಯೇಲರಲ್ಲಿ ಶಾಶ್ವತವಾಗಿ ಸ್ಥಿರಪಡಿಸುತ್ತಿದ್ದರು.</verse>
				<verse number="14">ಈಗಲಾದರೋ, ನಿನ್ನ ಅರಸುತನ ನಿಲ್ಲುವುದಿಲ್ಲ; ನೀನು ಸರ್ವೇಶ್ವರನ ಆಜ್ಞೆಯನ್ನು ಕೈಗೊಳ್ಳದೆ ಹೋದುದರಿಂದ ಅವರು ತಮಗೆ ಒಪ್ಪಿಗೆಯಾದ ಬೇರೊಬ್ಬ ವ್ಯಕ್ತಿಯನ್ನು ತಮ್ಮ ಪ್ರಜೆಯ ಮೇಲೆ ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದನು.</verse>
				<verse number="15">ಅನಂತರ ಸಮುವೇಲನು ಗಿಲ್ಗಾಲನ್ನು ಬಿಟ್ಟು ಬೆನ್ಯಾಮೀನ್ಯರ ಗಿಬೆಯಕ್ಕೆ ಹೋದನು. ಸೌಲನು ತನ್ನ ಜೊತೆಯಲ್ಲಿದ್ದ ಸೈನಿಕರನ್ನು ಎಣಿಸಿದಾಗ ಆರುನೂರು ಮಂದಿಯಿದ್ದರು.</verse>
				<verse number="16">ಅವರೊಡನೆ ಅವನೂ ಅವನ ಮಗನಾದ ಯೋನಾತಾನನೂ ಬೆನ್ಯಾಮೀನ್ಯರ ಗೆಬದಲ್ಲಿ ಇಳಿದುಕೊಂಡರು. ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಪಾಳೆಯಮಾಡಿಕೊಂಡಿದ್ದರು.</verse>
				<verse number="17">ಸುಲಿಗೆ ಮಾಡುವುದಕ್ಕಾಗಿ ಫಿಲಿಷ್ಟಿಯರ ಪಾಳೆಯದಿಂದ ಮೂರು ಗುಂಪುಗಳು ಹೊರಟುಬಂದವು. ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್‍ನಾಡಿಗೆ,</verse>
				<verse number="18">ಇನ್ನೊಂದು ಬೇತ್‍ಹೋರೋನಿನ ಕಡೆಗೆ, ಮತ್ತೊಂದು ಜೆಬೋಯೀಮ್ ಕಣಿವೆಯೂ ಅದರ ಕೆಳಗಿರುವ ಅರಣ್ಯವೂ ಕಾಣಿಸುವ ಸ್ಥಳಕ್ಕೆ ಹೋದವು.</verse>
				<verse number="19">ಹಿಬ್ರಿಯರು ಈಟಿಕತ್ತಿಗಳನ್ನು ಮಾಡಿಸಿಕೊಳ್ಳಕೂಡದೆಂದು ಫಿಲಿಷ್ಟಿಯರ ಆಜ್ಞೆ ಇದ್ದುದರಿಂದ ಇಸ್ರಯೇಲ್ ದೇಶದಲ್ಲಿ ಅವುಗಳನ್ನು ಮಾಡುವ ಕಮ್ಮಾರರೇ ಇರಲಿಲ್ಲ.</verse>
				<verse number="20">(ಅವರು ತಮ್ಮ ನೇಗಿಲಿನ ಗುಳ, ಸಲಿಕೆ, ಕೊಡಲಿ, ಗುದ್ದಲಿ ಇವುಗಳನ್ನು ಹಣಿಸುವುದಕ್ಕಾಗಿ ಫಿಲಿಷ್ಟಿಯರ ಬಳಿಗೆ ಹೋಗಬೇಕಾಗಿತ್ತು.</verse>
				<verse number="21">ಗುದ್ದಲಿ, ಸಲಿಕೆ, ತ್ರಿಶೂಲ, ಕೊಡಲಿ, ಮುಳ್ಳುಗೋಲು ಇವುಗಳನ್ನು ಹದಮಾಡುವುದಕ್ಕಾಗಿ ಅವರಲ್ಲಿ ಅರ ಮಾತ್ರ ಇತ್ತು.)</verse>
				<verse number="22">ಹೀಗಿದ್ದುದರಿಂದ ಯುದ್ಧ ಪ್ರಾರಂಬಿಸಿದಾಗ ಸೌಲ ಯೋನಾತಾನರ ಹೊರತು, ಅವರ ಜೊತೆಯಲ್ಲಿದ್ದ ಜನರಲ್ಲಿ ಒಬ್ಬನ ಕೈಯಲ್ಲಾದರೂ ಕತ್ತಿಯಾಗಲಿ ಭರ್ಜಿಯಾಗಲಿ ಇರಲಿಲ್ಲ.</verse>
				<verse number="23">ಫಿಲಿಷ್ಟಿಯರ ಕಾವಲುದಂಡು ಮಿಕ್ಮಾಷಿನ ಕಣಿವೆಯ ಕಡೆಗೆ ಹೊರಟಿತು.</verse>
			</chapter>
			<chapter number="14">
				<verse number="1">ಒಂದು ದಿನ ಸೌಲನ ಮಗ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ಆಚೆ ಇರುವ ಫಿಲಿಷ್ಟಿಯರ ಕಾವಲು ದಂಡಿಗೆ ವಿರೋಧವಾಗಿ ಹೋಗೋಣ ಬಾ,” ಎಂದು ಹೇಳಿದನು. ಆದರೆ ಈ ಸಂಗತಿಯನ್ನು ತನ್ನ ತಂದೆಗೆ ತಿಳಿಸಲಿಲ್ಲ.</verse>
				<verse number="2">ಸೌಲನಾದರೋ ಗಿಬೆಯ ಪ್ರಾಂತ್ಯದ ಅಂತ್ಯಭಾಗವಾಗಿರುವ ಮಿಗ್ರೋನಿನಲ್ಲಿನ ಒಂದು ದಾಳಿಂಬ ವೃಕ್ಷದ ಅಡಿಯಲ್ಲಿ ಇಳಿದುಕೊಂಡಿದ್ದನು. ಅವನ ಜೊತೆಯಲ್ಲಿ ಸುಮಾರು ಆರುನೂರು ಮಂದಿ ಸೈನಿಕರು ಇದ್ದರು.</verse>
				<verse number="3">‘ಏಫೋದ’ನ್ನು ಧರಿಸಿಕೊಂಡಿದ್ದ ಅಹೀಯನೂ ಇದ್ದನು. ಈ ಅಹೀಯನು ಶಿಲೋವಿನಲ್ಲಿ ಸರ್ವೇಶ್ವರನ ಯಾಜಕನಾಗಿದ್ದ ಏಲಿಯ ಮರಿಮಗನೂ ಫೀನೆಹಾಸನ ಮೊಮ್ಮಗನೂ ಈಕಾಬೋದನ ಅಣ್ಣನಾದ ಅಹೀಟೂಬನ ಮಗನೂ ಆಗಿದ್ದನು. ಯೋನಾತಾನನು ಹೋದದ್ದು ಜನರಿಗೂ ಗೊತ್ತಿರಲಿಲ್ಲ.</verse>
				<verse number="4">ಫಿಲಿಷ್ಟಿಯರ ದಂಡಿನ ಸ್ಥಳಕ್ಕೆ ಹೋಗಲು ಅವನು ಮಿಕ್ಮಾಷಿನ ಕಣಿವೆಯ ಮೂಲಕ ಹೋಗಬೇಕಾಗಿತ್ತು. ಕಣಿವೆಯ ಎರಡು ಬದಿಗಳಲ್ಲಿ ಒಂದೊಂದು ಕೋಡು ಕಲ್ಲುಗಳಿದ್ದವು. ಒಂದಕ್ಕೆ ‘ಬೋಚೇಚ್’ ಎಂದೂ ಇನ್ನೊಂದಕ್ಕೆ ‘ಸೆನೆ’ ಎಂದೂ ಹೆಸರು.</verse>
				<verse number="5">ಒಂದು ಮಿಕ್ಮಾಷಿಗೆ ಮುಖಮಾಡಿ ಉತ್ತರಕ್ಕಿತ್ತು. ಇನ್ನೊಂದು ಗೆಬಕ್ಕೆ ಮುಖಮಾಡಿ ದಕ್ಷಿಣಕ್ಕಿತ್ತು.</verse>
				<verse number="6">ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ, “ಸುನ್ನತಿಯಿಲ್ಲದ ಈ ಕಾವಲುದಂಡಿನವರೆಗೆ ನೇರವಾಗಿ ಹೋಗೋಣ ಬಾ; ಬಹುಶಃ ಸರ್ವೇಶ್ವರ ತಾವೇ ನಮ್ಮ ಪರವಾಗಿ ಕಾರ್ಯಸಾಧಿಸುವರು. ಬಹುಜನರಿಂದಾಗಲಿ, ಸ್ವಲ್ಪಜನರಿಂದಾಗಲಿ, ರಕ್ಷಿಸುವುದು ಸರ್ವೇಶ್ವರಸ್ವಾಮಿಗೆ ಅಸಾಧ್ಯವಲ್ಲ,” ಎಂದು ಹೇಳಿದನು.</verse>
				<verse number="7">ಆಯುಧಗಳನ್ನು ಹೊರುವವನು, “ನಿಮ್ಮ ಇಷ್ಟದಂತೆ ಮಾಡಿ; ನಿಮ್ಮ ಕೋರಿಕೆಯ ಹಾಗೆ ನಾನೂ ನಿಮ್ಮನ್ನು ಹಿಂಬಾಲಿಸುತ್ತೇನೆ,” ಎಂದನು.</verse>
				<verse number="8">ಆಗ ಯೋನಾತಾನನು, “ಅವರು ನಮ್ಮನ್ನು ಕಾಣುವಂತೆ ಸಮೀಪಕ್ಕೆ ಹೋಗೋಣ.</verse>
				<verse number="9">‘ನಾವು ನಿಮ್ಮ ಬಳಿಗೆ ಬರುವ ತನಕ ಅಲ್ಲೇ ನಿಲ್ಲಿ’ ಎಂದು ಅವರು ನಮಗೆ ಹೇಳಿದರೆ, ಮೇಲೆ ಹತ್ತದೆ, ಇದ್ದ ಸ್ಥಳದಲ್ಲೇ ಇರೋಣ.</verse>
				<verse number="10">ಆದರೆ ಅವರು, ‘ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿ’ ಎಂದು ಕರೆದರೆ ಸರ್ವೇಶ್ವರ ಅವರನ್ನು ನಮ್ಮ ಕೈಗೆ ಒಪ್ಪಿಸಿದ್ದಾರೆಂಬುದಕ್ಕೆ ಇದೇ ಗುರುತೆಂದು ತಿಳಿದು ಮೇಲೆ ಹೋಗೋಣ,” ಎಂದನು.</verse>
				<verse number="11">ಇವರಿಬ್ಬರೂ ಫಿಲಿಷ್ಟಿಯರ ಕಾವಲುದಂಡಿನವರಿಗೆ ಕಾಣಿಸಿಕೊಂಡಾಗ ಅವರು, “ಇಗೋ, ಹಿಬ್ರಿಯರು ತಾವು ಅಡಗಿಕೊಂಡಿದ್ದ ಕಿಂಡಿಗಳಿಂದ ಹೊರಗೆ ಬರುತ್ತಲಿದ್ದಾರೆ,” ಎಂದು ತಮ್ಮೊಳಗೆ ಮಾತಾಡಿಕೊಂಡರು.</verse>
				<verse number="12">ಆ ಫಿಲಿಷ್ಟಿಯರು ಯೋನಾತಾನನಿಗೂ ಅವನ ಆಯುಧಗಳನ್ನು ಹೊರುವವನಿಗೂ, “ಹತ್ತಿ ನಮ್ಮ ಬಳಿಗೆ ಬನ್ನಿ; ನಿಮಗೆ ತೋರಿಸಬೇಕಾದದ್ದೊಂದಿದೆ,” ಎಂದರು. ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ, “ನೀನೂ ನನ್ನ ಸಂಗಡ ಹತ್ತಿ ಬಾ; ಸರ್ವೇಶ್ವರ ಅವರನ್ನು ಇಸ್ರಯೇಲರ ಕೈಗೆ ಒಪ್ಪಿಸಿದ್ದಾರೆ,” ಎಂದು ಹೇಳಿದನು.</verse>
				<verse number="13">ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ತಮ್ಮ ಮೊಣಕಾಲನ್ನು ಹಾಗು ಕೈಗಳನ್ನು ಊರುತ್ತಾ ಕಣಿವೆಯಿಂದ ಮೇಲೆ ಬಂದರು. ಯೋನಾತಾನನು ಫಿಲಿಷ್ಟಿಯರನ್ನು ನೆಲಕ್ಕೆ ಉರುಳಿಸುತ್ತಾ ಹೋದನು; ಅವನ ಸೇವಕನು ಹಿಂದಿನಿಂದ ಅವರನ್ನು ಕೊಲ್ಲುತ್ತಾ ನಡೆದನು.</verse>
				<verse number="14">ಹೀಗೆ ಒಂದು ಜೋಡಿ ಎತ್ತು ಒಪ್ಪೊತ್ತಿನಲ್ಲಿ ಉಳುವಷ್ಟು ಭೂಮಿಯಲ್ಲೇ ಸುಮಾರು ಇಪ್ಪತ್ತು ಮಂದಿಯನ್ನು ಅವರು ವಧಿಸಿದರು.</verse>
				<verse number="15">ಇದರಿಂದಾಗಿ ಪಾಳೆಯದಲ್ಲಿದ್ದವರು, ಕಾವಲುಗಾರರಾಗಿ ಠಾಣದಲ್ಲಿದ್ದವರು, ಸುಲಿಗೆಗಾಗಿ ಹೊರಗೆ ಹೋಗಿದ್ದವರು, ಹಾಗು ಉಳಿದ ಎಲ್ಲಾ ಜನರು ಭಯದಿಂದ ನಡುಗತೊಡಗಿದರು. ಇದಲ್ಲದೆ, ದೇವರು ಭೂಕಂಪವನ್ನುಂಟು ಮಾಡಿದರು. ಈ ಕಾರಣ ಜನರಲ್ಲಿ ಮಹಾಭೀತಿಯುಂಟಾಯಿತು.</verse>
				<verse number="16">ಬೆನ್ಯಾಮೀನ್ಯರ ಗಿಬೆಯದಲ್ಲಿ ಕಾವಲಿದ್ದ ಸೌಲನ ಸೈನಿಕರು ಫಿಲಿಷ್ಟಿಯರ ದಂಡು ಹೀಗೆ ಕಳವಳಗೊಂಡು ಚದರಿಹೋಗುತ್ತಿರುವುದನ್ನು ಕಂಡರು.</verse>
				<verse number="17">ಸೌಲನು ತನ್ನ ಜೊತೆಯಲ್ಲಿದ್ದವರಿಗೆ, “ನಮ್ಮನ್ನು ಬಿಟ್ಟುಹೋದವರು ಯಾರೆಂಬುದನ್ನು ಲೆಕ್ಕಮಾಡಿ ನೋಡಿ,” ಎಂದು ಆಜ್ಞಾಪಿಸಿದನು. ಅವರು ಲೆಕ್ಕಮಾಡಿ ನೋಡುವಾಗ ಯೋನಾತಾನನೂ ಅವನ ಆಯುಧಗಳನ್ನು ಹೊರುವ ಸೇವಕನೂ ಇಲ್ಲದಿರುವುದು ತಿಳಿದುಬಂದಿತು.</verse>
				<verse number="18">ಅನಂತರ ಸೌಲನು ಅಹೀಯನಿಗೆ, “’ಏಫೋದ’ನ್ನು ತೆಗೆದುಕೊಂಡು ಬಾ,” ಎಂದು ಆಜ್ಞಾಪಿಸಿದನು. (ಆ ದಿನದಂದು ಅಹೀಯನು ಇಸ್ರಯೇಲರ ಮುಂದೆ ಏಫೋದನ್ನು ಹೊತ್ತು ನಡೆಯುತ್ತಿದ್ದನು).</verse>
				<verse number="19">ಸೌಲನು ಯಾಜಕನೊಡನೆ ಮಾತಾಡುತ್ತಿರುವಷ್ಟರಲ್ಲೆ ಫಿಲಿಷ್ಟಿಯರ ಸೈನ್ಯದ ಗದ್ದಲವು ಹೆಚ್ಚು ಹೆಚ್ಚಾಯಿತು. ಆದುದರಿಂದ ಅವನು ದಾಳಹಾಕುವ ಕೈ ನಿಲ್ಲಿಸೆಂದು ಯಾಜಕನಿಗೆ ಹೇಳಿ,</verse>
				<verse number="20">ತನ್ನ ಜೊತೆಯಲ್ಲಿದ್ದವರನ್ನು ಕೂಡಿಕೊಂಡು ಯುದ್ಧಕ್ಕೆ ಹೋದನು; ಅಷ್ಟರಲ್ಲಿ ಫಿಲಿಷ್ಟಿಯರ ಸೈನ್ಯದಲ್ಲಿ ಗಲಿಬಿಲಿಯುಂಟಾಗಿ ಒಬ್ಬನನ್ನೊಬ್ಬನು ಕೊಂದುಹಾಕುತ್ತಿದ್ದನು.</verse>
				<verse number="21">ಇದಲ್ಲದೆ, ಮುಂದಿನಿಂದಲೇ ಫಿಲಿಷ್ಟಿಯರನ್ನು ಸೇರಿಕೊಂಡು ಅವರೊಡನೆ ಪಾಳೆಯದಲ್ಲಿದ್ದ ಹಿಬ್ರಿಯರು, ಸೌಲ-ಯೋನಾತಾನರ ಜೊತೆಯಲ್ಲಿ ಬಂದ ಇಸ್ರಯೇಲರನ್ನು ಕೂಡಿಕೊಂಡರು.</verse>
				<verse number="22">ಎಫ್ರಯಿಮ್ ಪರ್ವತಪ್ರಾಂತ್ಯದಲ್ಲಿ ಅಡಗಿಕೊಂಡಿದ್ದ ಇಸ್ರಯೇಲರಿಗೆ ಫಿಲಿಷ್ಟಿಯರು ಓಡಿಹೋದರೆಂಬ ಸಮಾಚಾರ ಮುಟ್ಟಿದಾಗ ಅವರೂ ಯುದ್ಧಕ್ಕೆ ಬಂದು ಅವರನ್ನು ಬೆನ್ನಟ್ಟಿದರು.</verse>
				<verse number="23">ಹೀಗೆ ಸರ್ವೇಶ್ವರ ಆ ದಿನದಲ್ಲಿ ಇಸ್ರಯೇಲರಿಗೆ ಜಯವನ್ನುಂಟುಮಾಡಿದರು. ಯುದ್ಧ ಬೇತಾವೆನಿನ ಆಚೆಯ ತನಕ ನಡೆಯಿತು.</verse>
				<verse number="24">ಆ ದಿವಸ ಸೌಲನು ಇಸ್ರಯೇಲರಿಗೆ, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕಾಗಿ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತ,” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹಳವಾಗಿ ಬಳಲಿಹೋಗಿದ್ದರು. ಒಬ್ಬನಾದರೂ ಆಹಾರಪದಾರ್ಥವನ್ನು ರುಚಿಸಿರಲಿಲ್ಲ.</verse>
				<verse number="25">ಜನರೆಲ್ಲರೂ ನೆಲಜೇನು ಇರುವ ಕಾಡಿಗೆ ಬಂದರು.</verse>
				<verse number="26">ಅವರು ಅಲ್ಲಿ ಜೇನುತುಪ್ಪ ಹರಿಯುವುದನ್ನು ಕಂಡರೂ ಶಾಪಕ್ಕೆ ಭಯಪಟ್ಟು ಯಾವನೂ ಅದನ್ನು ಬಾಯಿಗೆ ಹಾಕಲಿಲ್ಲ.</verse>
				<verse number="27">ಯೋನಾತಾನನಿಗೆ ತನ್ನತಂದೆ ಜನರಿಗೆ ಆಣೆಯಿಟ್ಟು ಹೇಳಿದ್ದು ಗೊತ್ತಿರಲಿಲ್ಲವಾದ್ದರಿಂದ ಅವನು ತನ್ನ ಕೋಲನ್ನು ಜೇನುಹುಟ್ಟಿನಲ್ಲಿ ಚುಚ್ಚಿ ಕೈಯಿಂದ ತೆಗೆದು ತಿಂದನು. ಕೂಡಲೆ ಅವನ ಕಣ್ಣುಗಳು ಕಳೆಗೊಂಡವು.</verse>
				<verse number="28">ಒಡನೆ ಒಬ್ಬನು ಅವನಿಗೆ, “ಈ ದಿನ ಊಟಮಾಡುವಂಥವರು ಶಾಪಗ್ರಸ್ಥರಾಗುವರೆಂದು ನಿನ್ನ ತಂದೆ ಆಣೆಯಿಟ್ಟು ಹೇಳಿದ್ದಾರೆ,” ಎಂದು ತಿಳಿಸಿದನು. ಜನರು ಬಹಳವಾಗಿ ಬಳಲಿಹೋದುದನ್ನು ಕಂಡು ಯೋನಾತಾನನು ಆ ವ್ಯಕ್ತಿಗೆ,</verse>
				<verse number="29">“ನನ್ನ ತಂದೆ ನಾಡಿಗೆ ನಷ್ಟವನ್ನುಂಟುಮಾಡಿದ್ದಾರೆ; ನಾನು ಸ್ವಲ್ಪ ಜೇನುತುಪ್ಪವನ್ನು ತಿಂದುದರಿಂದ ನನ್ನ ಕಣ್ಣುಗಳು ಹೇಗೆ ಕಳೆಗೊಂಡಿರುತ್ತವೆ ನೋಡು;</verse>
				<verse number="30">ಜನರು ತಾವು ಇಂದು ಶತ್ರುಗಳಿಂದ ಸುಲಿದುಕೊಂಡ ಆಹಾರವನ್ನು ಯಥೇಚ್ಛವಾಗಿ ಊಟಮಾಡಿದ್ದರೆ ಅವರು ಇನ್ನಷ್ಟು ಬಲಗೊಳ್ಳುತ್ತಿದ್ದರು. ಫಿಲಿಷ್ಟಿಯರಲ್ಲಿ ಹತರಾಗದವರು ಇನ್ನೂ ಹೆಚ್ಚುಮಂದಿ ಇದ್ದಾರೆ,” ಎಂದನು.</verse>
				<verse number="31">ಆ ದಿನ ಜನರು ಮಿಕ್ಮಾಷಿನಿಂದ ಅಯ್ಯಾಲೋನಿನವರೆಗೆ ಫಿಲಿಷ್ಟಿಯರನ್ನು ಹೊಡೆದು ಬಹಳವಾಗಿ ದಣಿದಿದ್ದರು.</verse>
				<verse number="32">ಆದ್ದರಿಂದ ಅವರು ತಾವು ಕೊಳ್ಳೆಮಾಡಿದ ಎತ್ತು, ಕುರಿ, ಕರು ಇವುಗಳನ್ನು ಹಿಡಿದು ನೆಲದ ಮೇಲೆಯೇ ಕೊಂದು ಮಾಂಸದೊಡನೆ ರಕ್ತವನ್ನೂ ತಿಂದರು.</verse>
				<verse number="33">ಆಗ ಕೆಲವರು ಸೌಲನಿಗೆ, “ನೋಡಿ, ಜನರು ರಕ್ತವನ್ನು ಭುಜಿಸಿ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡುತ್ತಿದ್ದಾರೆ,” ಎಂದು ತಿಳಿಸಿದರು. ಅವನು, “ಇದು ಮಹಾಪಾತಕವೇ ಸರಿ; ನೀವು ಬೇಗನೆ ನನ್ನ ಬಳಿಗೆ ಒಂದು ದೊಡ್ಡ ಕಲ್ಲನ್ನು ಹೊರಳಿಸಿ ತಂದಿಡಿ;</verse>
				<verse number="34">ಬಳಿಕ ಜನರ ಬಳಿಗೆ ಹೋಗಿ ಅವರಿಗೆ, ‘ರಕ್ತವನ್ನು ಭುಜಿಸಿ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಬೇಡಿ, ನಿಮ್ಮ ನಿಮ್ಮ ಎತ್ತು ಕುರಿಗಳನ್ನು ಇಲ್ಲಿಗೆ ತಂದು ಕೊಂದು ತಿನ್ನಿ,’ ಎಂದು ಹೇಳಿ,” ಎಂದನು. ಹಾಗೆಯೇ ಜನರೆಲ್ಲರು ತಮ್ಮ ತಮ್ಮ ಎತ್ತು ಕುರಿಗಳನ್ನು ಅದೇ ರಾತ್ರಿ ಅಲ್ಲಿಗೆ ತಂದು ಕೊಂದು ತಿಂದರು.</verse>
				<verse number="35">ಸೌಲನು ಸರ್ವೇಶ್ವರಸ್ವಾಮಿಗೆ ಒಂದು ಬಲಿಪೀಠವನ್ನು ಕಟ್ಟಿಸಿದನು; ಅವನು ಕಟ್ಟಿಸಿದ ಬಲಿಪೀಠಗಳಲ್ಲಿ ಇದೇ ಮೊದಲನೆಯದು.</verse>
				<verse number="36">ಸೌಲನು ತನ್ನ ಸೈನಿಕರನ್ನು, “ಬನ್ನಿ, ನಾವು ಈ ರಾತ್ರಿಯಲ್ಲೇ ಫಿಲಿಷ್ಟಿಯರನ್ನು ಬೆನ್ನಟ್ಟಿ ಬೆಳಗಾಗುವವರೆಗೆ ಅವರನ್ನು ಸುಲಿದುಕೊಂಡು ಒಬ್ಬನನ್ನೂ ಉಳಿಸದೆ ಕೊಂದುಹಾಕೋಣ,” ಎಂದು ಕರೆದನು. ಅವರು, “ನಿಮ್ಮ ಇಷ್ಟದಂತೆ ಆಗಲಿ,” ಎಂದು ಹೇಳಿದರು. ಆದರೆ ಯಾಜಕನು, “ಇತ್ತ ಬನ್ನಿ; ನಾವು ದೇವರನ್ನು ವಿಚಾರಿಸೋಣ,” ಎಂದನು.</verse>
				<verse number="37">ಸೌಲನು, “ದೇವಾ, ನಾವು ಫಿಲಿಷ್ಟಿಯರನ್ನು ಬೆನ್ನಟ್ಟಬಹುದೇ? ನೀವು ಅವರನ್ನು ಇಸ್ರಯೇಲರ ಕೈಗೆ ಒಪ್ಪಿಸಿಕೊಡುವಿರೋ?” ಎಂದು ಕೇಳಿಕೊಂಡನು. ಆದರೆ ಸರ್ವೇಶ್ವರ ಅವನಿಗೆ ಆ ದಿನ ಉತ್ತರಕೊಡಲೇ ಇಲ್ಲ.</verse>
				<verse number="38">ಆಗ ಸೌಲನು ಜನರ ಮುಖಂಡರಿಗೆ, “ನೀವೆಲ್ಲರೂ ಇಲ್ಲಿಗೆ ಬಂದು, ಈ ದಿನ ಎಲ್ಲಿ ಪಾಪಕೃತ್ಯ ನಡೆದಿದೆ ಎಂದು ವಿಚಾರಿಸಿ ಗುರುತು ಹಚ್ಚಿರಿ.</verse>
				<verse number="39">ಇಸ್ರಯೇಲರ ರಕ್ಷಕನಾದ ಸರ್ವೇಶ್ವರನ ಆಣೆ, ಪಾಪಮಾಡಿದವರು ಯಾರೇ ಆಗಿರ಼ಲಿ, ಮಗನಾದ ಯೋನಾತಾನನಾಗಿದ್ದರೂ ಸರಿಯೇ, ಅವನು ಸಾಯಲೇಬೇಕು,” ಎಂದು ಹೇಳಿದನು. ಜನರು ಏನೂ ಮಾತಾಡದೆ ಮೌನವಾಗಿದ್ದರು.</verse>
				<verse number="40">ಆಗ ಸೌಲನು ಅವರಿಗೆ, “ನೀವೆಲ್ಲರೂ ಒಂದು ಕಡೆ ನಿಲ್ಲಿರಿ; ನಾನೂ ನನ್ನ ಮಗ ಯೋನಾತಾನನೂ ಮತ್ತೊಂದು ಕಡೆಯಲ್ಲಿರುವೆವು,” ಎಂದನು. ಅವರು, “ನಿಮ್ಮ ಇಷ್ಟದಂತೆ ಆಗಲಿ,” ಎಂದರು.</verse>
				<verse number="41">ಅನಂತರ ಸೌಲನು, “ಇಸ್ರಯೇಲ್ ದೇವರೇ, ಸತ್ಯವನ್ನು ತಿಳಿಸಿ,” ಎಂದು ಸರ್ವೇಶ್ವರನನ್ನು ಪ್ರಾರ್ಥಿಸಿ ಚೀಟುಹಾಕಿದನು. ಅದು ಅವನಿಗೂ ಯೋನಾತಾನನಿಗೂ ಬಂದಿತು. ಜನರು ಪಾರಾದರು.</verse>
				<verse number="42">ಸೌಲನು ಮತ್ತೆ, “ನಮ್ಮಿಬ್ಬರೊಳಗೆ ಚೀಟುಹಾಕಿ,” ಎಂದು ಹೇಳಿದನು. ಹಾಗೆಯೇ ಮಾಡಿದಾಗ ಚೀಟು ಯೋನಾತಾನನಿಗೆ ಬಿದ್ದಿತು.</verse>
				<verse number="43">ಆಗ ಸೌಲನು ಯೋನಾತಾನನನ್ನು, “ನೀನು ಏನು ಮಾಡಿದೆ, ಹೇಳು,” ಎಂದು ಕೇಳಿದನು. ಅವನು, “ನಾನು ಕೋಲಿನಿಂದ ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ತಿಂದೆ; ಸಾಯುವುದಕ್ಕೆ ಸಿದ್ಧನಾಗಿದ್ದೇನೆ,” ಎಂದು ಉತ್ತರಕೊಟ್ಟನು.</verse>
				<verse number="44">ಅದಕ್ಕೆ ಸೌಲನು, “ಯೋನಾತಾನನೇ, ನಾನು ನಿನ್ನನ್ನು ಕೊಲ್ಲದೆ ಬಿಟ್ಟರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ,” ಎಂದನು.</verse>
				<verse number="45">ಜನರು ಅವನಿಗೆ, “ದೇವರ ಸಹಾಯದಿಂದ ಈ ದಿನ ಇಸ್ರಯೇಲರಿಗೆ ಮಹಾಜಯವನ್ನುಂಟುಮಾಡಿದ ಯೋನಾತಾನನು ಸಾಯಬೇಕೇ? ಕೂಡದು; ಸರ್ವೇಶ್ವರನಾಣೆ. ಅವನ ತಲೆಗೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಿಸಬಾರದು,” ಎಂದು ಹೇಳಿ ಪ್ರಾಯಶ್ಚಿತ್ತವನ್ನು ಕೊಟ್ಟು ಅವನನ್ನು ಬಿಡಿಸಿದರು.</verse>
				<verse number="46">ಸೌಲನು ಆಮೇಲೆ ಫಿಲಿಷ್ಟಿಯರನ್ನು ಹಿಂದಟ್ಟದೆ ತನ್ನ ಮನೆಗೆ ಹೋದನು. ಫಿಲಿಷ್ಟಿಯರೂ ತಮ್ಮ ಪ್ರಾಂತ್ಯಕ್ಕೆ ಹೋದರು.</verse>
				<verse number="47">ಸೌಲನು ಇಸ್ರಯೇಲರ ಅರಸನಾದ ಮೇಲೆ ಅವನು ಸುತ್ತಲಿನ ವೈರಿಗಳಾದ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೋಬದ ಅರಸರು, ಫಿಲಿಷ್ಟಿಯರು ಇವರೊಡನೆ ಯುದ್ಧಮಾಡಿದನು. ಹೋದಕಡೆಯಲ್ಲೆಲ್ಲಾ ಜಯವನ್ನೇ ಹೊಂದಿದನು.</verse>
				<verse number="48">ಇದಲ್ಲದೆ ಅವನು ಸುಲಿಗೆ ಮಾಡುವವರಾದ ಅಮಾಲೇಕ್ಯರಿಗೆ ವಿರೋಧವಾಗಿ ದಂಡೆತ್ತಿ ಹೋಗಿ, ಅವರನ್ನು ಸದೆಬಡಿದು ಇಸ್ರಯೇಲರನ್ನು ಅವರ ಕೈಗೆ ಸಿಕ್ಕದಂತೆ ತಪ್ಪಿಸಿದನು.</verse>
				<verse number="49">ಸೌಲನ ಗಂಡುಮಕ್ಕಳ ಹೆಸರು ಇವು: ಯೋನಾತಾನ್, ಇಷ್ವಿ ಹಾಗು ಮಲ್ಕೀಷೂವ; ಅವನ ಹೆಣ್ಣುಮಕ್ಕಳ ಹೆಸರು ಮೇರಬ್ ಹಾಗು ಮೀಕಲ್.</verse>
				<verse number="50">ಅಹೀಮಾಚನ ಮಗಳಾದ ಅಹೀನೋವಮಳು ಅವನ ಹೆಂಡತಿ; ನೇರನ ಮಗನಾದ ಅಬ್ನೇರನು ಅವನ ಸೇನಾಪತಿ; ನೇರನು ಸೌಲನ ಚಿಕ್ಕಪ್ಪನು.</verse>
				<verse number="51">ಸೌಲನ ತಂದೆಯಾದ ಕೀಷನೂ ಅಬ್ನೇರನ ತಂದೆಯಾದ ನೇರನೂ ಅಬೀಯೇಲನ ಮಕ್ಕಳು.</verse>
				<verse number="52">ಸೌಲನ ಜೀವಮಾನದಲ್ಲೆಲ್ಲಾ ಫಿಲಿಷ್ಟಿಯರಿಗೂ ಇಸ್ರಯೇಲರಿಗೂ ಘೋರ ಯುದ್ಧ ಇದ್ದುದರಿಂದ ಅವನು ಎಲ್ಲಿಯಾದರೂ ಒಬ್ಬ ಬಲಿಷ್ಠನೂ ಪರಾಕ್ರಮಶಾಲಿಯೂ ಆದ ಮನುಷ್ಯನನ್ನು ಕಂಡಕೂಡಲೆ, ಅವನನ್ನು ತನ್ನ ಸೈನ್ಯಕ್ಕೆ ಸೇರಿಸಿಕೊಳ್ಳುತ್ತಿದ್ದನು.</verse>
			</chapter>
			<chapter number="15">
				<verse number="1">ಸಮುವೇಲನು ಸೌಲನಿಗೆ, “ಸರ್ವೇಶ್ವರಸ್ವಾಮಿ ನಿನ್ನನ್ನು ತಮ್ಮ ಪ್ರಜೆಗಳಾದ ಇಸ್ರಯೇಲರ ಮೇಲೆ ಅರಸನನ್ನಾಗಿ ಅಭಿಷೇಕಿಸುವುದಕ್ಕಾಗಿ ನನ್ನನ್ನೇ ಕಳುಹಿಸಿದರು ಅಲ್ಲವೆ?” ಅವರು ಈಗ ಹೇಳುವುದನ್ನು ಕೇಳು;</verse>
				<verse number="2">“ಇಸ್ರಯೇಲರು ಈಜಿಪ್ಟಿನಿಂದ ಬರುತ್ತಿರುವಾಗ ದಾರಿಯಲ್ಲಿ ಅಮಾಲೇಕ್ಯರು ಅವರಿಗೆ ವಿರೋಧವಾಗಿ ನಿಂತು ತೊಂದರೆಪಡಿಸಿದರು. ಆದ್ದರಿಂದ ನಾನು ಅವರಿಗೆ ಮುಯ್ಯಿತೀರಿಸುವೆನು.</verse>
				<verse number="3">ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು, ಶಿಶುಗಳನ್ನು ಹಾಗು ಎತ್ತು, ಕುರಿ, ಕತ್ತೆ, ಒಂಟೆ ಇವುಗಳನ್ನೂ ಉಳಿಸದೆ ಕೊಂದುಹಾಕು ಎಂದು ಹೇಳುತ್ತಾರೆ ಸೇನಾಧೀಶ್ವರರಾದ ಸರ್ವೇಶ್ವರ,” ಎಂದನು.</verse>
				<verse number="4">ಸೌಲನು ತೆಲಾಯೀಮಿನಲ್ಲಿ ಸೈನ್ಯವನ್ನು ಕೂಡಿಸಿ, ಲೆಕ್ಕ ತೆಗೆದನು. ಅದರಲ್ಲಿ ಎರಡು ಲಕ್ಷಮಂದಿ ಕಾಲಾಳುಗಳು ಇದ್ದರು; ಯೆಹೂದ್ಯರು ಹತ್ತುಸಾವಿರ ಮಂದಿ ಇದ್ದರು.</verse>
				<verse number="5">ಅವನು ಇವರೊಡನೆ ಅಮಾಲೇಕ್ಯರ ರಾಜಧಾನಿಯ ಬಳಿಗೇ ಹೋಗಿ ಅಲ್ಲಿನ ಒಂದು ತಗ್ಗಿನಲ್ಲಿ ಹೊಂಚುಹಾಕುತ್ತಿದ್ದನು.</verse>
				<verse number="6">ಆದರೆ ಕೇನ್ಯರಿಗೆ ಅವನು, “ನೀವು ಅಮಾಲೇಕ್ಯರನ್ನು ಬಿಟ್ಟುಹೋಗಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ; ಇಸ್ರಯೇಲರು ಈಜಿಪ್ಟಿನಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರ ಅಲ್ಲವೆ?” ಎಂದು ಹೇಳಿ ಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.</verse>
				<verse number="7">ಆಗ ಸೌಲನು ಅಮಾಲೇಕ್ಯರನ್ನು ಹವೀಲಾ ಪ್ರಾಂತ್ಯದಿಂದ ಈಜಿಪ್ಟಿನ ಪೂರ್ವದಿಕ್ಕಿನಲ್ಲಿರುವ ಶೂರಿನವರೆಗೂ ಸದೆಬಡಿಯುತ್ತಾ ಹೋದನು.</verse>
				<verse number="8">ಅವರ ಅರಸನಾದ ಅಗಾಗನನ್ನು ಜೀವಂತವಾಗಿ ಹಿಡಿದು ಜನರೆಲ್ಲರನ್ನು ಕತ್ತಿಯಿಂದ ಸಂಹರಿಸಿದನು.</verse>
				<verse number="9">ಸೌಲನು ಹಾಗು ಇಸ್ರಯೇಲರು ಅಗಾಗನನ್ನು ಮಾತ್ರವಲ್ಲ, ಮೇಲ್ತರದ ಕುರಿದನಗಳನ್ನು, ಕುರಿಮರಿಗಳನ್ನು, ಕೊಬ್ಬಿದ ಪಶುಗಳನ್ನು ಹಾಗು ಶ್ರೇಷ್ಠವಾದ ಎಲ್ಲ ಪದಾರ್ಥಗಳನ್ನು ನಾಶಮಾಡಲು ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲ ನಾಶಮಾಡಿಬಿಟ್ಟರು.</verse>
				<verse number="10">ಸರ್ವೇಶ್ವರ ಸಮುವೇಲನಿಗೆ, “ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ವಿಷಾದಿಸುತ್ತೇನೆ. ಅವನು ನನಗೆ ವಿಮುಖನಾಗಿದ್ದಾನೆ. ನನ್ನ ಆಜ್ಞೆಗಳನ್ನು ನೆರವೇರಿಸುವುದಿಲ್ಲ,” ಎಂದು ಹೇಳಿದರು. ಸಮುವೇಲನು ಸಿಟ್ಟುಗೊಂಡು ರಾತ್ರಿಯೆಲ್ಲಾ ಸರ್ವೇಶ್ವರನಿಗೆ ಮೊರೆಯಿಟ್ಟನು.</verse>
				<verse number="11"></verse>
				<verse number="12">ಬೆಳಿಗ್ಗೆ ಎದ್ದು ಸೌಲನನ್ನು ಕರ್ಮೆಲಿಗೆ ಹೋಗಿ ಅಲ್ಲಿ ತನಗಾಗಿ ಒಂದು ಜ್ಞಾಪಕಸ್ತಂಭವನ್ನು ನಿಲ್ಲಿಸಿ, ಅಲ್ಲಿಂದ ದಿಬ್ಬ ಇಳಿದು ಗಿಲ್ಗಾಲಿಗೆ ಹೋದನು ಎಂಬ ಸಮಾಚಾರ ಸಿಕ್ಕಿತು.</verse>
				<verse number="13">ಸಮುವೇಲನು ಅಲ್ಲಿಗೂ ಹೋದನು. ಸೌಲನು ಅವನನ್ನು ಕಂಡು, “ಸರ್ವೇಶ್ವರ ನಿನ್ನನ್ನು ಹರಸಲಿ! ನಾನು ಅವರ ಅಪ್ಪಣೆಯನ್ನು ನೆರವೇರಿಸಿದ್ದೇನೆ,” ಎಂದನು.</verse>
				<verse number="14">ಅದಕ್ಕೆ ಸಮುವೇಲನು, “ಹಾಗಾದರೆ ಇದೇನು? ಕುರಿಗಳ ಕೂಗು ನನ್ನ ಕಿವಿಗೆ ಬೀಳುತ್ತಿದೆ, ದನಗಳ ಶಬ್ದವು ನನಗೆ ಕೇಳಿಸುತ್ತಿದೆ,” ಎಂದನು.</verse>
				<verse number="15">ಸೌಲನು, “ಜನರು ನಿಮ್ಮ ದೇವರಾದ ಸರ್ವೇಶ್ವರನಿಗೆ ಬಲಿಸಲ್ಲಿಸುವುದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಮೇಲ್ತರದವುಗಳನ್ನು ಉಳಿಸಿ ತಂದಿದ್ದಾರೆ; ಮಿಕ್ಕವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು,” ಎಂದು ಉತ್ತರಕೊಟ್ಟನು.</verse>
				<verse number="16">ಆಗ ಸಮುವೇಲನು, “ಅದಿರಲಿ; ಸರ್ವೇಶ್ವರ ಕಳೆದ ರಾತ್ರಿ ನನಗೆ ಹೇಳಿದ್ದನ್ನು ತಿಳಿಸುತ್ತೇನೆ ಕೇಳು,” ಎಂದನು. ಅವನು, “ಹೇಳು,” ಎನ್ನಲು ಸಮುವೇಲನು,</verse>
				<verse number="17">“ನೀನು ನಿನ್ನ ದೃಷ್ಟಿಯಲ್ಲಿ ಅಲ್ಪನಾಗಿದ್ದರೂ ಸರ್ವೇಶ್ವರ ನಿನಗೆ ಇಸ್ರಯೇಲರಲ್ಲಿ ರಾಜಾಭಿಷೇಕ ಮಾಡಿದ್ದರಿಂದ ನೀನು ಎಲ್ಲಾ ಕುಲಗಳಿಗೆ ಶಿರಸ್ಸಾದೆ.</verse>
				<verse number="18">ಅವರು ನಿನಗೆ, ‘ಹೊರಟು ಹೋಗಿ ದುಷ್ಟರಾದ ಅಮಾಲೇಕ್ಯರೊಡನೆ ಯುದ್ಧಮಾಡಿ ಅವರೆಲ್ಲರನ್ನೂ ಸಂಪೂರ್ಣವಾಗಿ ನಾಶಮಾಡು’ ಎಂದು ಹೇಳಿದರು.</verse>
				<verse number="19">ಆದರೆ ನೀನು ಸರ್ವೇಶ್ವರನ ಮಾತನ್ನು ಕೇಳದೆ, ಕೊಳ್ಳೆಗಾಗಿ ಮನಸೋತು, ಅವರಿಗೆ ದ್ರೋಹಮಾಡಿದ್ದೇಕೆ?” ಎಂದನು.</verse>
				<verse number="20">ಆಗ ಸೌಲನು ಸಮುವೇಲನಿಗೆ, “ಏನು? ನಾನು ಸರ್ವೇಶ್ವರನ ಮಾತನ್ನು ಕೇಳಲಿಲ್ಲವೇ? ಅವರು ಕಳುಹಿಸಿದಲ್ಲಿಗೆ ಹೋಗಿ ಅಮಾಲೇಕ್ಯರನ್ನೆಲ್ಲ ಸಂಹರಿಸಿ ಅವರ ಅರಸನಾದ ಅಗಾಗನನ್ನು ಹಿಡಿದದುತಂದೆ.</verse>
				<verse number="21">ಆದರೆ ಜನರು ಸಂಪೂರ್ಣವಾಗಿ ಸಂಹರಿಸಬೇಕಾದ ಕೊಳ್ಳೆಯಲ್ಲಿ ಉತ್ತಮವಾದ ಕುರಿದನಗಳನ್ನು ನಿಮ್ಮ ದೇವರಾದ ಸರ್ವೇಶ್ವರನಿಗೆ ಗಿಲ್ಗಾಲಿನಲ್ಲಿ ಬಲಿಯರ್ಪಣೆ ಮಾಡುವುದಕ್ಕಾಗಿ ಉಳಿಸಿತಂದರು,” ಎಂದು ಉತ್ತರಕೊಟ್ಟನು.</verse>
				<verse number="22">ಅದಕ್ಕೆ ಸಮುವೇಲನು ಇಂತೆಂದನು: “ವಿಧೇಯತೆಯನ್ನು ಮೆಚ್ಚುವಷ್ಟು ಬಲಿ ಹೋಮಗಳನ್ನು ಮೆಚ್ಚುತ್ತಾರೆಯೇ ಸರ್ವೇಶ್ವರಾ? ಇಲ್ಲ. ಬಲಿಯರ್ಪಣೆಗಿಂತ ಆಜ್ಞಾಪಾಲನೆ ಶ್ರೇಷ್ಠ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟ.</verse>
				<verse number="23">ತಂತ್ರಮಂತ್ರಗಳಷ್ಟೇ ಕೆಟ್ಟದು ಪ್ರತಿಭಟನೆ ಕಳ್ಳಭಕ್ತಿಗೂ ವಿಗ್ರಹಾರಾಧನೆಗೂ ಸಮಾನ ಹಟಮಾರಿತನ. ನೀ ತಳ್ಳಿಬಿಟ್ಟೆ ಸರ್ವೇಶ್ವರನ ಆದೇಶವನ್ನು; ತಳ್ಳಿಬಿಟ್ಟರವರು ನಿನ್ನ ಅರಸುತನವನ್ನು,” ಎಂದು ನುಡಿದನು.</verse>
				<verse number="24">ಸೌಲನು ಸಮುವೇಲನಿಗೆ, “ನಾನು ಸರ್ವೇಶ್ವರನ ಮತ್ತು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆ.</verse>
				<verse number="25">ದಯವಿಟ್ಟು ನನ್ನ ಪಾಪವನ್ನು ಕ್ಷಮಿಸಿ; ನಾನು ಸರ್ವೇಶ್ವರನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲೇ ಬನ್ನಿ,” ಎಂದು ಅವನನ್ನು ಬೇಡಿಕೊಂಡನು.</verse>
				<verse number="26">ಅದಕ್ಕೆ ಸಮುವೇಲನು, “ನಾನು ಹಿಂದಿರುಗಿ ನಿನ್ನ ಜೊತೆಯಲ್ಲಿ ಬರುವುದಿಲ್ಲ; ನೀನು ಸರ್ವೇಶ್ವರನ ಮಾತನ್ನು ತಳ್ಳಿಬಿಟ್ಟಿದ್ದರಿಂದ ಅವರು ನಿನ್ನನ್ನು ಇಸ್ರಯೇಲರ ಅರಸುತನದಿಂದ ತಳ್ಳಿಬಿಟ್ಟಿದ್ದಾರೆ,” ಎಂದು ಹೇಳಿ ಹಿಂದಿರುಗಿ ಅಲ್ಲಿಂದ ಹೊರಟನು.</verse>
				<verse number="27">ಆದರೆ ಸೌಲನು ಅವನ ಮೇಲಂಗಿಯ ಅಂಚನ್ನು ಹಿಡಿದು ಎಳೆದನು; ಅದು ಹರಿದುಹೋಯಿತು.</verse>
				<verse number="28">ಆಗ ಸಮುವೇಲನು ಅವನಿಗೆ, “ಸರ್ವೇಶ್ವರ ಈ ದಿನ ಇಸ್ರಯೇಲ್ ರಾಜ್ಯವನ್ನು ನಿನ್ನಿಂದ ಕಿತ್ತು ನಿನಗಿಂತ ಉತ್ತಮವಾದ ಇನ್ನೊಬ್ಬನಿಗೆ ಕೊಟ್ಟಿದ್ದಾರೆ.</verse>
				<verse number="29">ಇಸ್ರಯೇಲರ ನಿತ್ಯಾಧಾರವಾದ ಅವರು ಸುಳ್ಳಾಡುವವರಲ್ಲ; ಮಾತನ್ನು ಹಿಂತೆಗೆದುಕೊಳ್ಳುವವರಲ್ಲ; ಏಕೆಂದರೆ ಅವರು ಮನಸ್ಸು ಬದಲಾಯಿಸುವಂಥ ಮನುಷ್ಯರಲ್ಲ,” ಎಂದು ಹೇಳಿದನು.</verse>
				<verse number="30">ಅದಕ್ಕೆ ಸೌಲನು, “ನಾನು ಪಾಪಮಾಡಿದ್ದೇನೆ; ದಯವಿಟ್ಟು ಇಸ್ರಯೇಲರ ಮುಂದೆ ಹಾಗು ಜನರ ಹಿರಿಯರ ಮುಂದೆ ನನ್ನ ಮಾನವನ್ನು ಉಳಿಸಿ; ನಾನು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯನ್ನು ಆರಾಧಿಸಲು ಶಕ್ತನಾಗುವಂತೆ ಹಿಂದಿರುಗಿ ನನ್ನ ಜೊತೆಯಲ್ಲೇ ಬನ್ನಿ,” ಎಂದು ಬೇಡಿಕೊಂಡನು.</verse>
				<verse number="31">ಆಗ ಸಮುವೇಲನು ಹಿಂದಿರುಗಿ ಸೌಲನ ಜೊತೆಯಲ್ಲೇ ಹೋದನು. ಸೌಲನು ದೇವರನ್ನು ಆರಾಧಿಸಿದನು.</verse>
				<verse number="32">ತರುವಾಯ ಸಮುವೇಲನು ಅಮಾಲೇಕ್ಯರ ಅರಸನಾದ ಅಗಾಗನನ್ನು ತನ್ನ ಬಳಿಗೆ ಬರಹೇಳಿದನು. ಅಗಾಗನು ಮರಣಭಯ ತಪ್ಪಿತೆಂದು ನೆನಸಿಕೊಂಡು ಸಂತೋಷದಿಂದ ಅವನ ಹತ್ತಿರ ಬಂದನು.</verse>
				<verse number="33">ಆದರೆ ಸಮುವೇಲನು ಅವನಿಗೆ: “ನಿನ್ನ ಕತ್ತಿ ಪುತ್ರಶೋಕವನ್ನುಂಟುಮಾಡಿತು ಅನೇಕ ಸ್ತ್ರೀಯರಿಗೆ; ನಿನ್ನ ತಾಯಿ ಸವಿಯಲಿ ಆ ಶೋಕವನು ಎಲ್ಲರಿಗೂ ಹೆಚ್ಚಿಗೆ’ ಎಂದು ಹೇಳಿ ಅಗಾಗನನ್ನು ಗಿಲ್ಗಾಲಿನಲಿ ಸರ್ವೇಶ್ವರನ ಸನ್ನಿಧಿಯಲ್ಲೇ ಕಡಿದುಹಾಕಿದನು.</verse>
				<verse number="34">ಅನಂತರ ಸಮುವೇಲನು ರಾಮಾಕ್ಕೆ ಹೋದನು; ಇತ್ತ ಸೌಲನು ತನ್ನ ಊರಾದ ಗಿಬೆಯದಲ್ಲಿದ್ದ ಮನೆಗೆ ತೆರಳಿದನು.</verse>
				<verse number="35">ಸಮುವೇಲನು ಜೀವದಿಂದಿರುವವರೆಗೂ ಸೌಲನನ್ನು ನೋಡಲು ಹೋಗಲಿಲ್ಲ. ಸೌಲನನ್ನು ಇಸ್ರಯೇಲರ ಅರಸನನ್ನಾಗಿ ಮಾಡಿದ್ದಕ್ಕಾಗಿ ಸರ್ವೇಶ್ವರ ವಿಷಾದಿಸಿದರು; ಈ ಕಾರಣ ಸಮುವೇಲನು ಅವನ ವಿಷಯದಲ್ಲಿ ದುಃಖಪಡುತ್ತಿದ್ದನು.</verse>
			</chapter>
			<chapter number="16">
				<verse number="1">ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.</verse>
				<verse number="2">ಅದಕ್ಕೆ ಸಮುವೇಲನು, “ನಾನು ಹೋಗುವುದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ?’ ಎಂದನು. ಆಗ ಸರ್ವೇಶ್ವರ, “ನೀನು ಒಂದು ಕಡಸನ್ನು ತೆಗೆದುಕೊಂಡು ಹೋಗು. ಸರ್ವೇಶ್ವರನಿಗೆ ಬಲಿಯರ್ಪಣೆ ಮಾಡಲು ಬಂದಿದ್ದೇನೆ ಎಂದು ಹೇಳಿ ಜೆಸ್ಸೆಯನನ್ನು ಅದಕ್ಕೆ ಆಮಂತ್ರಿಸು.</verse>
				<verse number="3">ಆಮೇಲೆ ನೀನು ಮಾಡಬೇಕಾದುದನ್ನು ನಾನೇ ತಿಳಿಸುತ್ತೇನೆ; ನಾನು ಯಾರನ್ನು ತೋರಿಸುತ್ತೇನೋ ಅವನನ್ನೇ ನೀನು ಅಭಿಷೇಕಿಸಬೇಕು,” ಎಂದರು.</verse>
				<verse number="4">ಸರ್ವೇಶ್ವರ ಹೇಳಿದಂತೆಯೇ ಸಮುವೇಲನು ಬೆತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುನಡುಗುತ್ತಾ ಬಂದು, ಅವನನ್ನು ಎದುರುಗೊಂಡು, “ನಿನ್ನ ಆಗಮನ ನಮಗೆ ಶುಭಕರವಾಗಿದೆಯೇ?’ ಎಂದು ಕೇಳಿದರು. ಅವನು,</verse>
				<verse number="5">ಹೌದು, ಶುಭಕರವಾಗಿದೆ; ಸರ್ವೇಶ್ವರನಿಗೆ ಬಲಿಯನ್ನರ್ಪಿಸುವುದಕ್ಕೆ ಬಂದಿದ್ದೇನೆ. ನೀವು ಶುದ್ಧರಾಗಿ ನನ್ನ ಜೊತೆಯಲ್ಲಿ ಬಲಿಯರ್ಪಣೆಗೆ ಬನ್ನಿ,” ಎಂದು ಹೇಳಿ ಜೆಸ್ಸೆಯನನ್ನೂ ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಬಲಿಯರ್ಪಣೆಗೆ ಆಮಂತ್ರಿಸಿದನು. ಅವರು ಬಂದರು.</verse>
				<verse number="6">ಸಮುವೇಲನು ಎಲೀಯಾಬನನ್ನು ನೋಡಿ ತನ್ನಷ್ಟಕ್ಕೆ, “ನಿಶ್ಚಯವಾಗಿ ಸರ್ವೇಶ್ವರ ಅಭಿಷೇಕಕ್ಕೆ ಆರಿಸಿಕೊಂಡವನು ನನ್ನ ಮುಂದೆಯೇ ಇದ್ದಾನೆ,” ಎಂದುಕೊಂಡನು.</verse>
				<verse number="7">ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.</verse>
				<verse number="8">ಜೆಸ್ಸೆಯನು ಅಬಿನಾದಾಬನನ್ನು ಸಮುವೇಲನ ಬಳಿಗೆ ಬರಮಾಡಲು ಸಮುವೇಲನು, “ಸರ್ವೇಶ್ವರ ಇವನನ್ನೂ ಆರಿಸಿಕೊಳ್ಳಲಿಲ್ಲ,” ಎಂದು ಹೇಳಿದನು.</verse>
				<verse number="9">ತರುವಾಯ ಜೆಸ್ಸೆಯನು ಶಮ್ಮ ಎಂಬವನನ್ನು ಬರಮಾಡಲು ಸಮುವೇಲನು, “ಸರ್ವೇಶ್ವರ ಇವನನ್ನೂ ಆರಿಸಿಕೊಳ್ಳಲಿಲ್ಲ,” ಎಂದು ಹೇಳಿದನು.</verse>
				<verse number="10">ಹೀಗೆ ಜೆಸ್ಸೆಯನು ತನ್ನ ಮಕ್ಕಳಲ್ಲಿ ಏಳು ಮಂದಿಯನ್ನೂ ಅವನ ಬಳಿಗೆ ಬರಮಾಡಿದರೂ ಅವನು, “ಸರ್ವೇಶ್ವರ ಇವರನ್ನು ಆರಿಸಿಕೊಳ್ಳಲಿಲ್ಲ,” ಎಂದು ನುಡಿದನು.</verse>
				<verse number="11">ಅನಂತರ ಸಮುವೇಲನು ಜೆಸ್ಸೆಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇಮಂದಿಯೋ?” ಎಂದು ಕೇಳಿದನು. ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿದ್ದಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ,” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಇಲ್ಲಿಗೆ ಬರಮಾಡು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು,” ಎಂದು ಹೇಳಿದನು. ಜೆಸ್ಸೆಯನು ಅವನನ್ನು ಕರೆದುತರಿಸಿದನು.</verse>
				<verse number="12">ಅವನು ಕೆಂಬಣ್ಣದವನು, ಸುಂದರ ನೇತ್ರನು, ಹಾಗು ನೋಟಕ್ಕೆ ರಮಣೀಯನು. ಸರ್ವೇಶ್ವರ ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ,” ಎಂದು ಆಜ್ಞಾಪಿಸಿದರು.</verse>
				<verse number="13">ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕಿಸಿದನು. ಕೂಡಲೆ ಸರ್ವೇಶ್ವರನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಾಕ್ಕೆ ಹೊರಟುಹೋದನು.</verse>
				<verse number="14">ಸರ್ವೇಶ್ವರನ ಆತ್ಮ ಸೌಲನನ್ನು ಬಿಟ್ಟುಹೋಯಿತು. ಅವರಿಂದ ಬಂದ ದುರಾತ್ಮವೊಂದು ಅವನನ್ನು ಪೀಡಿಸುತ್ತಿತ್ತು.</verse>
				<verse number="15">ಆದ್ದರಿಂದ ಅವನ ಸೇವಕರು ಅವನಿಗೆ, “ಇಗೋ, ದೇವರಿಂದ ಬಂದ ದುರಾತ್ಮ ನಿಮ್ಮನ್ನು ಪೀಡಿಸುತ್ತಾ ಇದೆ.</verse>
				<verse number="16">ಒಡೆಯಾ, ಅಪ್ಪಣೆಯಾಗಲಿ, ನಿಮ್ಮ ಸನ್ನಿಧಿಯಲ್ಲಿ ನಿಂತಿರುವ ನಿಮ್ಮ ಸೇವಕರಾದ ನಾವು ಹೋಗಿ ಕಿನ್ನರಿ ಬಾರಿಸುವವರಲ್ಲಿ ನಿಪುಣನಾದ ಒಬ್ಬನನ್ನು ಹುಡುಕಿ ತರುತ್ತೇವೆ. ಸರ್ವೇಶ್ವರನಿಂದ ಕಳುಹಿಸಲಾದ ದುರಾತ್ಮ ನಿಮ್ಮ ಮೇಲೆ ಬರುವಾಗ ಅವನು ಕಿನ್ನರಿ ಬಾರಿಸಿದರೆ ನಿಮಗೆ ಉಪಶಮನ ಆಗುವುದು,” ಎಂದು ಹೇಳಿದರು.</verse>
				<verse number="17">ಸೌಲನು ಅವರಿಗೆ, “ಚೆನ್ನಾಗಿ ಬಾರಿಸಬಲ್ಲವನಾದ ಒಬ್ಬನನ್ನು ನನಗಾಗಿ ಹುಡುಕಿ ಕರೆದುಕೊಂಡು ಬನ್ನಿ,” ಎಂದು ಆಜ್ಞಾಪಿಸಿದನು.</verse>
				<verse number="18">ಸೇವಕರಲ್ಲೊಬ್ಬನು ಅವನಿಗೆ, “ಬೆತ್ಲೆಹೇಮಿನವನಾದ ಜೆಸ್ಸೆಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಬಾರಿಸಬಲ್ಲನು. ಅವನು ಪರಾಕ್ರಮಶಾಲಿ, ರಣಶೂರ, ವಾಕ್ಚತುರ, ಸುಂದರ ಹಾಗು ಸರ್ವೇಶ್ವರನ ಅನುಗ್ರಹ ಹೊಂದಿದವ,” ಎಂದು ತಿಳಿಸಿದನು.</verse>
				<verse number="19">ಕೂಡಲೆ ಸೌಲನು ಜೆಸ್ಸೆಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ಕುರಿ ಮೇಯಿಸುತ್ತಿರುವ ನಿನ್ನ ಮಗ ದಾವೀದನನ್ನು ನನ್ನ ಬಳಿಗೆ ಕಳುಹಿಸು,” ಎಂದು ಹೇಳಿಸಿದನು.</verse>
				<verse number="20">ಜೆಸ್ಸೆಯನು ರೊಟ್ಟಿಯನ್ನು, ಒಂದು ಬುದ್ದಲಿ ದ್ರಾಕ್ಷಾರಸವನ್ನು ಹಾಗು ಒಂದು ಹೋತಮರಿಯನ್ನು ಕತ್ತೆಯ ಮೇಲೆ ಹೇರಿಸಿ, ತನ್ನ ಮಗ ದಾವೀದನ ಮುಖಾಂತರ ಸೌಲನಿಗೆ ಕಳುಹಿಸಿದನು.</verse>
				<verse number="21">ಹೀಗೆ ದಾವೀದನು ಸೌಲನ ಬಳಿಗೆ ಬಂದು ಅವನ ಸೇವಕನಾದನು. ಸೌಲನು ಅವನನ್ನು ಬಹಳವಾಗಿ ಪ್ರೀತಿಸಿದನು, ತನ್ನ ಆಯುಧಗಳನ್ನು ಹೊರುವುದಕ್ಕೆ ನೇಮಿಸಿಕೊಂಡನು.</verse>
				<verse number="22">ತರುವಾಯ ಸೌಲನು ಜೆಸ್ಸೆಯನ ಬಳಿಗೆ ದೂತರನ್ನು ಅಟ್ಟಿ, ಅವನಿಗೆ, “ನಾನು ದಾವೀದನನ್ನು ಮೆಚ್ಚಿದ್ದೇನೆ; ಅವನು ನನ್ನ ಸನ್ನಿಧಿಯಲ್ಲೇ ಸೇವೆಮಾಡಲಿ,” ಎಂದು ತಿಳಿಸಿದನು.</verse>
				<verse number="23">ದೇವರಿಂದ ಕಳುಹಿಸಲಾಗಿದ್ದ ದುರಾತ್ಮ ಸೌಲನ ಮೇಲೆ ಬಂದಾಗ ದಾವೀದನು ಕಿನ್ನರಿಯನ್ನು ಬಾರಿಸುತ್ತಿದ್ದನು. ಆಗ ಆ ದುರಾತ್ಮ ಸೌಲನನ್ನು ಬಿಟ್ಟುಹೋಗುತ್ತಿತ್ತು. ಅವನು ಉಪಶಮನಹೊಂದಿ ಚೆನ್ನಾಗಿರುತ್ತಿದ್ದನು.</verse>
			</chapter>
			<chapter number="17">
				<verse number="1">ಯೆಹೂದ ಪ್ರಾಂತ್ಯದ ಸೋಕೋವಿನಲ್ಲಿ ಫಿಲಿಷ್ಟಿಯರು ಯುದ್ಧಕ್ಕಾಗಿ ಸೈನ್ಯವನ್ನು ಜಮಾಯಿಸಿದ್ದರು. ಸೋಕೋವಿಗೂ ಅಜೇಕಕ್ಕೂ ಮಧ್ಯೆಯಿರುವ ಎಫೆಸ್ದಮ್ಮೀಮಿನಲ್ಲಿ ಬೀಡುಬಿಟ್ಟಿದ್ದರು.</verse>
				<verse number="2">ಈ ಫಿಲಿಷ್ಟಿಯರೊಡನೆ ಯುದ್ಧಮಾಡಲು ಸೌಲನೂ ಇಸ್ರಯೇಲರೂ ತಮ್ಮ ಸೈನ್ಯವನ್ನು ಜಮಾಯಿಸಿಕೊಂಡು ಏಲಾ ಕಣಿವೆಯಲ್ಲಿ ಪಾಳೆಯಮಾಡಿಕೊಂಡು ವ್ಯೂಹಕಟ್ಟಿದರು.</verse>
				<verse number="3">ಫಿಲಿಷ್ಟಿಯರು ಒಂದು ಗುಡ್ಡದ ಪಕ್ಕದಲ್ಲೂ ಇಸ್ರಯೇಲರು ಇನ್ನೊಂದು ಗುಡ್ಡದ ಪಕ್ಕದಲ್ಲೂ ನಿಂತರು. ಉಭಯರ ಮಧ್ಯೆ ಒಂದು ಕಣಿವೆ ಇತ್ತು.</verse>
				<verse number="4">ಫಿಲಿಷ್ಟಿಯರ ಪಾಳೆಯದಿಂದ ಮಹಾ ಪರಾಕ್ರಮಿಯೊಬ್ಬನು ಹೊರಬಂದನು. ಅವನು ಗತ್ ಊರಿನವನು. ಅವನ ಹೆಸರು ಗೊಲ್ಯಾತ್. ಅವನ ಎತ್ತರ ಸುಮಾರು ಮೂರು ಮೀಟರ್.</verse>
				<verse number="5">ಅವನು ಧರಿಸಿದ್ದು ಕಂಚಿನ ಶಿರಸ್ತ್ರಾಣ. ಅದೇ ಲೋಹದ ಬಿಲ್ಲೆಗಳಿಂದ ಪರೆಪರೆಯಾಗಿ ಜೋಡಿಸಲಾಗಿದ್ದ ಅವನ ಕವಚ ಸುಮಾರು ಐವತ್ತೇಳು ಕಿಲೋಗ್ರಾಮಿನಷ್ಟು ತೂಕವಾಗಿತ್ತು.</verse>
				<verse number="6">ಅವನ ಪಾದರಕ್ಷೆಗಳು ಹಾಗು ಹೆಗಲ ಮೇಲಿನ ಈಟಿ ಕಂಚಿನದಾಗಿದ್ದವು.</verse>
				<verse number="7">ಅವನ ಬರ್ಜಿಯ ಕೋಲು ನೆಯ್ಗೆಗಾರರ ಕುಂಟೆಯಷ್ಟು ಗಾತ್ರದಾಗಿತ್ತು. ಅದರ ಅಲಗು ಏಳು ಕಿಲೋಗ್ರಾಮಿನಷ್ಟು ಭಾರವಾಗಿತ್ತು. ಅವನ ಗುರಾಣಿಯನ್ನು ಹೊರುವವನು ಅವನ ಮುಂದೆ ಮುಂದೆ ಹೋಗುತ್ತಿದ್ದನು.</verse>
				<verse number="8">ಗೊಲ್ಯಾತನು ಅಲ್ಲೆ ನಿಂತು, ಇಸ್ರಯೇಲರ ಸೈನ್ಯದತ್ತ ಹೀಗೆಂದು ಗರ್ಜಿಸಿದನು: “ನೀವು ಸಜ್ಜಾಗಿ ಬಂದಿರುವುದು ಯುದ್ಧಮಾಡಲಿಕ್ಕೋ? ನಾನು ಫಿಲಿಷ್ಟಿಯನು. ನೀವು ಆ ಸೌಲನ ಗುಲಾಮರು. ನಿಮ್ಮಲ್ಲಿ ಒಬ್ಬನನ್ನು ಆರಿಸಿಕೊಂಡು ನನ್ನ ಬಳಿಗೆ ಕಳುಹಿಸಿ.</verse>
				<verse number="9">ಅವನು ನನ್ನೊಡನೆ ಯುದ್ಧಮಾಡಿ ನನ್ನನ್ನು ಕೊಲ್ಲಲಿ; ಆಗ ನಮ್ಮವರು ನಿಮ್ಮ ಗುಲಾಮರಾಗುವರು. ನಾನು ಅವನನ್ನು ಸೋಲಿಸಿ ಕೊಂದರೆ ನೀವು ನಮಗೆ ಗುಲಾಮರಾಗಿ ನಮಗೆ ಸೇವೆಮಾಡಬೇಕು.”</verse>
				<verse number="10">ಅದೂ ಅಲ್ಲದೆ ಆ ಫಿಲಿಷ್ಟಿಯನು, “ಇಸ್ರಯೇಲ್ ಸೈನಿಕರಿಗೆ ನಾನು ಇದೀಗಲೇ ಹಾಕುವ ಸವಾಲು: ಇಂದು ನನ್ನೊಡನೆ ಕಾಳಗಕ್ಕೆ ನಿಮ್ಮಿಂದ ಒಬ್ಬನನ್ನು ಆಯ್ದು ಕಳುಹಿಸಿ, ನೋಡೋಣ,” ಎಂದು ಕೊಚ್ಚಿಕೊಂಡನು.</verse>
				<verse number="11">ಸೌಲನು ಹಾಗು ಇಸ್ರಯೇಲರೆಲ್ಲರು ಅವನ ಸವಾಲನ್ನು ಕೇಳಿ ಭಯಭೀತರಾದರು. ಅವರ ಎದೆ ಅದುರಿತು.</verse>
				<verse number="12">ದಾವೀದನು ಜೆಸ್ಸೆಯ ಎಂಬವನ ಮಗ. ಜೆಸ್ಸೆಯ ಯೆಹೂದದ ಬೆತ್ಲೆಹೇಮ್ ಊರಿನ ಎಫ್ರಾತ್ಯನು. ಸೌಲನ ಕಾಲದಲ್ಲಿ ಹಣ್ಣುಹಣ್ಣು ಮುದುಕ. ಇವನ ಎಂಟುಮಂದಿ ಮಕ್ಕಳಲ್ಲಿ ದಾವೀದನು ಒಬ್ಬ.</verse>
				<verse number="13">ಇವನ ಮೂರು ಮಂದಿ ಹಿರಿಯ ಮಕ್ಕಳು ಸೌಲನ ಜೊತೆ ಯುದ್ಧಕ್ಕೆ ಹೋಗಿದ್ದರು. ಅವರಲ್ಲಿ ಚೊಚ್ಚಲ ಮಗನ ಹೆಸರು ಎಲೀಯಾಬ್; ಎರಡನೆಯವನ ಹೆಸರು ಅಬೀನಾದಾಬ್; ಮೂರನೆಯವನು ಶಮ್ಮ.</verse>
				<verse number="14">ದಾವೀದನೆ ಎಲ್ಲರಿಗಿಂತ ಕಿರಿಯವನು. ಮೂರು ಮಂದಿ ಹಿರಿಯ ಮಕ್ಕಳು ಸೌಲನೊಂದಿಗೆ ಯುದ್ಧಕ್ಕೆ ಹೋಗಿದ್ದುದರಿಂದ</verse>
				<verse number="15">ದಾವೀದನು ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಮೇಯಿಸುವುದಕ್ಕೆ ಬೆತ್ಲೆಹೇಮಿಗೆ ಹೋದನು.</verse>
				<verse number="16">ಆ ಫಿಲಿಷ್ಟಿಯನು ನಾಲ್ವತ್ತು ದಿನ, ಬೆಳಿಗ್ಗೆ ಸಂಜೆ, ಒಂದೇ ಸಮನೆ ಸವಾಲು ಹಾಕುತ್ತಾ ಇದ್ದನು.</verse>
				<verse number="17">ಒಂದು ದಿನ ಜೆಸ್ಸೆಯನು ತನ್ನ ಮಗ ದಾವೀದನಿಗೆ, “ನೋಡು, ಇಲ್ಲಿ ಹತ್ತು ಕಿಲೋಗ್ರಾಂ ಹುರಿಗಾಳು, ಹತ್ತು ರೊಟ್ಟಿ ಇವೆ. ಇವುಗಳನ್ನು ತೆಗೆದುಕೊಂಡು ಬೇಗನೆ ಪಾಳೆಯಕ್ಕೆ ಹೋಗಿ ನಿನ್ನ ಅಣ್ಣಂದಿರಿಗೆ ಕೊಟ್ಟು ಬಾ.</verse>
				<verse number="18">ಇಲ್ಲಿ ಹತ್ತು ಗಿಣ್ಣಿನ ಉಂಡೆಗಳೂ ಇವೆ. ಇವುಗಳನ್ನು ಅವರ ಸಹಸ್ರಾಧಿಪತಿಗೆ ಕೊಡು. ಬರುವಾಗ ನಿನ್ನ ಅಣ್ಣಂದಿರ ಕ್ಷೇಮಸಮಾಚಾರವನ್ನು ವಿಚಾರಿಸಿಕೊಂಡು, ಅವರಿಂದ ಒಂದು ಗುರುತನ್ನು ತೆಗೆದುಕೊಂಡು ಬಾ.</verse>
				<verse number="19">ಸೌಲನೂ ಇಸ್ರಯೇಲರೂ ಏಲಾ ಕಣಿವೆಯಲ್ಲಿ ಫಿಲಿಷ್ಟಿಯರೊಡನೆ ಯುದ್ಧ ಮಾಡುತ್ತಿದ್ದಾರಲ್ಲವೆ?” ಎಂದು ಹೇಳಿದನು.</verse>
				<verse number="20">ದಾವೀದನು ಮರುದಿನ ಬೆಳಿಗ್ಗೆ ಎದ್ದು ಕುರಿಗಾಹಿಗೆ ಕುರಿಗಳನ್ನು ಒಪ್ಪಿಸಿ, ತನ್ನ ತಂದೆ ಜೆಸ್ಸೆಯನು ಹೇಳಿದವುಗಳನ್ನು ತೆಗೆದುಕೊಂಡು ಪಾಳೆಯದ ಬಂಡಿಗಳು ನಿಂತಿದ್ದ ಸ್ಥಳಕ್ಕೆ ಬಂದನು. ಸೈನ್ಯಗಳು ಯುದ್ಧಘೋಷಣೆಗಳನ್ನು ಹಾಕುವ ಸಮಯ ಅದು.</verse>
				<verse number="21">ಇಸ್ರಯೇಲರೂ ಫಿಲಿಷ್ಟಿಯರೂ ಎದುರುಬದುರಾಗಿ ವ್ಯೂಹಕಟ್ಟುತ್ತಿದ್ದರು.</verse>
				<verse number="22">ಅಷ್ಟರಲ್ಲಿ ದಾವೀದನು ತಾನು ತಂದವುಗಳನ್ನೂ ಆಹಾರಪದಾರ್ಥಗಳನ್ನೂ ಕಾಯುವವನ ಬಳಿಯಲ್ಲಿಟ್ಟು ರಣರಂಗಕ್ಕೆ ಓಡಿದನು. ತನ್ನ ಸಹೋದರರ ಯೋಗಕ್ಷೇಮ ವಿಚಾರಿಸಿದನು.</verse>
				<verse number="23">ಅವರೊಡನೆ ಮಾತಾಡುತ್ತಿರುವಾಗಲೇ ಗತ್ ಊರಿನ ರಣವೀರನಾದ ಗೊಲ್ಯಾತನೆಂಬ ಆ ಫಿಲಿಷ್ಟಿಯನು ತನ್ನ ಸೈನ್ಯದಿಂದ ಹೊರಗೆ ಬಂದನು. ಎಂದಿನಂತೆ ಯುದ್ಧ ಸವಾಲನ್ನು ಘೋಷಿಸಿದನು. ದಾವೀದನು ಅವನ ಮಾತುಗಳನ್ನು ಕೇಳಿದನು.</verse>
				<verse number="24">ಇಸ್ರಯೇಲರು ಅವನನ್ನು ನೋಡಿ ಭಯಭೀತಿಯಿಂದ ಓಡತೊಡಗಿದರು.</verse>
				<verse number="25">“ನೋಡಿದಿರೋ, ಇಸ್ರಯೇಲರಾದ ನಮ್ಮನ್ನು ತೃಣೀಕರಿಸಲು ಬಂದಿರುವ ಈ ವ್ಯಕ್ತಿಯನ್ನು? ಇವನನ್ನು ಕೊಲ್ಲುವವನಿಗೆ ಅರಸ ಅಪಾರ ದ್ರವ್ಯಕೊಡುವರು; ತಮ್ಮ ಮಗಳನ್ನೇ ಕೊಟ್ಟು ಮದುವೆಮಾಡುವರು; ಅಲ್ಲದೆ ಅಂಥವನ ಕುಟುಂಬಕ್ಕೆ ಎಲ್ಲಾ ತೆರಿಗೆ ಕಂದಾಯದಿಂದ ವಿನಾಯಿತಿ ದೊರಕುವುದು,” ಎಂದು ಮಾತಾಡಿಕೊಳ್ಳುತ್ತಿದ್ದರು.</verse>
				<verse number="26">ಆಗ ದಾವೀದನು ತನ್ನ ಬಳಿಯಲ್ಲೆ ನಿಂತಿದ್ದವರನ್ನು ನೋಡಿ, “ಜೀವಸ್ವರೂಪರಾದ ದೇವರ ಸೈನ್ಯವನ್ನು ಹೀಗೆ ಹಿಯ್ಯಾಳಿಸುವ, ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಯೇಲರಿಗೆ ಬಂದಿರುವ ನಿಂದೆ ಅವಮಾನವನ್ನು ನೀಗಿಸುವವನಿಗೆ ಏನು ಸಿಕ್ಕುವುದೆಂದು ಹೇಳಿದಿರಿ?” ಎಂದು ಕೇಳಿದನು.</verse>
				<verse number="27">ಅವರು ಮುಂದಿನಂತೆಯೇ ಇಂಥಿಂಥದ್ದು ದೊರಕುವುದೆಂದು ಉತ್ತರಕೊಟ್ಟರು.</verse>
				<verse number="28">ದಾವೀದನು ಜನರ ಸಂಗಡ ಹೀಗೆ ಮಾತಾಡುವುದನ್ನು ಅವನ ಹಿರಿಯ ಅಣ್ಣ ಎಲೀಯಾಬನು ಕೇಳಿದನು. ದಾವೀದನ ಮೇಲೆ ಅವನು ಸಿಟ್ಟುಗೊಂಡು, “ನೀನು ಇಲ್ಲಿಗೆ ಬಂದುದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದೆ? ನಿನ್ನ ಸೊಕ್ಕು, ತುಂಟತನ ನನಗೆ ಗೊತ್ತಿದೆ. ನೀನು ಕದನ-ಕುಚೇಷ್ಟೆ ನೋಡಬಂದಿರುವೆಯಷ್ಟೇ,” ಎಂದು ಗದರಿಸಿದನು.</verse>
				<verse number="29">ದಾವೀದನು, “ನಾನೇನು ತಪ್ಪು ಮಾಡಿದೆ? ಪ್ರಶ್ನೆಯೊಂದನ್ನು ಕೇಳಬಾರದಿತ್ತೆ?” ಎಂದು ಹೇಳಿ ಅವನನ್ನು ಬಿಟ್ಟು ಬೇರೆ ಕಡೆಗೆ ಹೋದನು.</verse>
				<verse number="30">ಅಲ್ಲೂ ಹಾಗೆಯೇ ವಿಚಾರಿಸಿದನು. ಜನರು ಮುಂದಿನಂತೆಯೇ ಉತ್ತರಕೊಟ್ಟರು.</verse>
				<verse number="31">ದಾವೀದನು ಈ ಪ್ರಕಾರ ವಿಚಾರಿಸುತ್ತಿದ್ದಾನೆಂಬ ಸಮಾಚಾರವನ್ನು ಸೌಲನಿಗೆ ಮುಟ್ಟಿಸಿದರು. ಸೌಲನು ದಾವೀದನನ್ನು ಕರೆಯಿಸಿದನು.</verse>
				<verse number="32">ದಾವೀದನು ಸೌಲನಿಗೆ, “ಆ ಫಿಲಿಷ್ಟಿಯನ ನಿಮಿತ್ತ ಯಾರೂ ಎದೆಗೆಡಬೇಕಾಗಿಲ್ಲ. ತಮ್ಮ ಸೇವಕನಾದ ನಾನೇ ಹೋಗಿ ಅವನೊಡನೆ ಯುದ್ಧಮಾಡುತ್ತೇನೆ,” ಎಂದು ಹೇಳಿದನು.</verse>
				<verse number="33">ಅದಕ್ಕೆ ಸೌಲನು, “ಅವನೊಡನೆ ಕಾದಾಡಲು ನಿನ್ನಿಂದ ಆಗದು; ನೀನು ಇನ್ನೂ ಹುಡುಗ. ಅವನಾದರೋ ಚಿಕ್ಕಂದಿನಿಂದಲೆ ಯುದ್ಧವೀರ,” ಎಂದು ಹೇಳಿದನು.</verse>
				<verse number="34">ಆಗ ದಾವೀದನು, “ತಮ್ಮ ಸೇವಕನಾದ ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿದ್ದಾಗ ಸಿಂಹವಾಗಲಿ ಅಥವಾ ಕರಡಿಯಾಗಲಿ ಬಂದು ಹಿಂಡಿನಲ್ಲಿನ ಕುರಿಮರಿಯನ್ನು ಹಿಡಿದುಕೊಂಡು ಹೋಗುವಾಗ</verse>
				<verse number="35">ನಾನು ಒಡನೆ ಬೆನ್ನಟ್ಟಿ ಹೋಗುತ್ತಿದ್ದೆ; ಆ ಕಾಡುಮೃಗವನ್ನು ಹೊಡೆದು ಕುರಿಮರಿಯನ್ನು ಕಿತ್ತುಕೊಳ್ಳುತ್ತಿದ್ದೆ. ಅದು ಹಿಂದಿರುಗಿ ನನ್ನ ಮೇಲೆ ಬಿದ್ದಾಗ ಅದನ್ನು ಗಡ್ಡ ಹಿಡಿದು, ಬಡಿದು, ಕೊಂದುಹಾಕುತ್ತಿದ್ದೆ.</verse>
				<verse number="36">ನಿಮ್ಮ ಸೇವಕನಾದ ನನ್ನಿಂದ ಆ ಸಿಂಹಕ್ಕೂ ಕರಡಿಗೂ ಆದ ಗತಿಯೇ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು; ಏಕೆಂದರೆ ಜೀವಸ್ವರೂಪರಾದ ದೇವರ ಸೈನ್ಯವನ್ನು ನಿಂದಿಸುತ್ತಿದ್ದಾನೆ.</verse>
				<verse number="37">ನನ್ನನ್ನು ಅಂಥ ಕರಡಿ-ಸಿಂಹಗಳ ಉಗುರುಗಳಿಂದ ತಪ್ಪಿಸಿದ ಸರ್ವೇಶ್ವರ ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವರು,” ಎಂದು ಹೇಳಿದನು. ಅದಕ್ಕೆ ಸೌಲನು, “ಹೋಗು, ಸರ್ವೇಶ್ವರ ನಿನ್ನೊಂದಿಗೆ ಇರಲಿ!” ಎಂದನು.</verse>
				<verse number="38">ಅದು ಮಾತ್ರವಲ್ಲ, ತನ್ನ ಯುದ್ಧವಸ್ತ್ರಗಳನ್ನೂ ಕವಚವನ್ನೂ ಅವನಿಗೆ ತೊಡಿಸಿದನು. ಅವನ ತಲೆಯ ಮೇಲೆ ಕಂಚಿನ ಶಿರಸ್ತ್ರಾಣವನ್ನೂ ಇಟ್ಟನು.</verse>
				<verse number="39">ದಾವೀದನು ಯುದ್ಧವಸ್ತ್ರವನ್ನು ಧರಿಸಿಕೊಂಡು, ಅದರ ಮೇಲೆ ಕತ್ತಿಯನ್ನು ಬಿಗಿದುಕೊಂಡು, ನಡೆದು ನೋಡಲಾರಂಭಿಸಿದನು. ರೂಢಿಯಿಲ್ಲದ ಕಾರಣ ಅವನು ಸೌಲನಿಗೆ, “ನನಗೆ ಅಭ್ಯಾಸವಿಲ್ಲ. ಇವುಗಳನ್ನು ಧರಿಸಿಕೊಂಡು ನಡೆಯಲಾರೆ,” ಎಂದು ಹೇಳಿ ಅವುಗಳನ್ನು ತೆಗೆದಿಟ್ಟನು.</verse>
				<verse number="40">ಕುರಿಕಾಯುವ ತನ್ನ ಕೋಲನ್ನೇ ತೆಗೆದುಕೊಂಡು ಹೊರಟನು. ಒಂದು ಹಳ್ಳಕ್ಕೆ ಹೋಗಿ ಐದು ನುಣುಪು ಕಲ್ಲುಗಳನ್ನು ಆರಿಸಿಕೊಂಡನು. ಕುರುಬರ ಪದ್ಧತಿಯಂತೆ ಅವುಗಳನ್ನು ತನ್ನ ಸೊಂಟಚೀಲದಲ್ಲಿ ಹಾಕಿಕೊಂಡನು. ಕೈಯಲ್ಲಿ ಕವಣೆಯನ್ನು ಹಿಡಿದು, ಆ ಫಿಲಿಷ್ಟಿಯನನ್ನು ಎದುರಿಸಲು ಹೋದನು.</verse>
				<verse number="41">ಇತ್ತ ಫಿಲಿಷ್ಟಿಯನು ದಾವೀದನ ಕಡೆ ಧಾವಿಸಿ ಬಂದನು. ಗುರಾಣಿ ಹೊರುವವನು ಅವನ ಮುಂದೆ ಇದ್ದನು.</verse>
				<verse number="42">ಫಿಲಿಷ್ಟಿಯನು ದಾವೀದನನ್ನು ಸಮೀಪಿಸಿ ನೋಡಿದನು. ಕೆಂಬಣ್ಣದವನೂ ಸುಂದರನೂ ಆದ ಆ ಯುವಕನ್ನು ದಿಟ್ಟಿಸಿ ತಾತ್ಸಾರದಿಂದ,</verse>
				<verse number="43">“ನೀನು ಕೋಲುಹಿಡಿದು ನನ್ನ ಬಳಿಗೆ ಬರಲು ನಾನು ನಾಯಿಯೆಂದು ತಿಳಿದುಕೊಂಡೆಯಾ?” ಎಂದು ಹೇಳಿ ಅವನನ್ನು ತನ್ನ ದೇವರ ಹೆಸರಿನಲ್ಲಿ ಶಪಿಸಿದನು.</verse>
				<verse number="44">“ಇಲ್ಲಿ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೆ, ಕಾಡಿನ ಮೃಗಗಳಿಗೆ ಹಂಚಿಕೊಡುತ್ತೇನೆ,” ಎಂದನು.</verse>
				<verse number="45">ಅದಕ್ಕೆ ದಾವೀದನು, “ನೀನು ಈಟಿ, ಕತ್ತಿ, ಭರ್ಜಿಗಳೊಡನೆ ನನ್ನ ಬಳಿಗೆ ಬರುತ್ತಿರುವೆ; ನೀನು ಹೀಯಾಳಿಸಿದ ಸೇನಾಧೀಶ್ವರರು ಹಾಗು ಇಸ್ರಯೇಲ್ ಯೋಧರ ದೇವರು ಆದಂಥ ಸರ್ವೇಶ್ವರನ ನಾಮದೊಡನೆ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ.</verse>
				<verse number="46">ಅವರು ಈ ದಿನ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವರು. ನಾನು ನಿನ್ನನ್ನು ಕೊಂದು, ನಿನ್ನ ತಲೆಯನ್ನು ಕಡಿದು, ಫಿಲಿಷ್ಟಿಯ ಸೈನ್ಯದ ಶವಗಳನ್ನು ಆಕಾಶದ ಪಕ್ಷಿಗಳಿಗೂ ವನ್ಯಮೃಗಗಳಿಗೂ ಹಂಚಿಕೊಡುವೆನು. ಇದರಿಂದ ಇಸ್ರಯೇಲರ ಸಂಗಡ ದೇವರಿದ್ದಾರೆಂಬುದು ಜಗತ್ತಿಗೆಲ್ಲಾ ತಿಳಿದುಬರುವುದು.</verse>
				<verse number="47">ಈಟಿ, ಕತ್ತಿಗಳಿಲ್ಲದೆ ಸರ್ವೇಶ್ವರ ರಕ್ಷಿಸಬಲ್ಲನೆಂಬುದು ಇಲ್ಲಿ ಕೂಡಿರುವವರೆಲ್ಲರಿಗೆ ಗೊತ್ತಾಗುವುದು. ಏಕೆಂದರೆ ಸಮರದ ಪರಿಣಾಮ ಇರುವುದು ಸರ್ವೇಶ್ವರನ ಕೈಯಲ್ಲಿ; ಅವರು ತಪ್ಪದೆ ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವರು,” ಎಂದನು.</verse>
				<verse number="48">ಕೂಡಲೆ ಆ ಫಿಲಿಷ್ಟಿಯನು ದಾವೀದನ ಮೇಲೆ ಎರಗಲು ಮತ್ತೆ ಧಾವಿಸಿದನು. ದಾವೀದನೂ ಫಿಲಿಷ್ಟಿಯರ ಸೈನ್ಯದ ಕಡೆಗೆ ನುಗ್ಗಿ ಆ ಫಿಲಿಷ್ಟಿಯನನ್ನು ಎದುರುಗೊಳ್ಳಲು ಓಡಿದನು.</verse>
				<verse number="49">ಕೈಯನ್ನು ಚೀಲದಲ್ಲಿ ಹಾಕಿ, ಒಂದು ಕಲ್ಲನ್ನು ತೆಗೆದು, ಅವನ ಕಣ್ಣಿಗೆ ಗುರಿಯಿಟ್ಟು, ಕವಣೆಯನ್ನು ಬೀಸಿ ಹೊಡೆದನು. ಆ ಕಲ್ಲು ಅವನ ಹಣೆಯನ್ನು ಹೊಕ್ಕಿತು. ಅವನು ಮುಖಕೆಳಗಾಗಿ ನೆಲಕ್ಕೆ ಉರುಳಿದನು.</verse>
				<verse number="50">ಕೂಡಲೆ ದಾವೀದನು ಹೋಗಿ ಆ ಫಿಲಿಷ್ಟಿಯನ ಮೇಲೆ ನಿಂತು, ಅವನ ಕತ್ತಿಯನ್ನೇ ಹಿರಿದು, ಅವನ ತಲೆಯನ್ನು ಕಡಿದು ಸಾಯಿಸಿದನು.</verse>
				<verse number="51">ಹೀಗೆ ದಾವೀದನು ಕತ್ತಿಯಿಂದಲ್ಲ, ಬರೀ ಒಂದು ಕವಣೆಕಲ್ಲಿನಿಂದ ಆ ಫಿಲಿಷ್ಟಿಯನನ್ನು ಸೋಲಿಸಿ ಕೊಂದುಹಾಕಿದನು. ತಮ್ಮ ರಣವೀರನು ಸತ್ತುಹೋದದ್ದನ್ನು ಕಂಡು ಫಿಲಿಷ್ಟಿಯರು ಓಡಿಹೋದರು.</verse>
				<verse number="52">ಇಸ್ರಯೇಲರೂ ಯೆಹೂದ್ಯರೂ ಎದ್ದು ಆರ್ಭಟಿಸಿ ಫಿಲಿಷ್ಟಿಯರನ್ನು ಕಣಿವೆಯ ದಾರಿಯವರೆಗೂ ಎಕ್ರೋನಿನ ಬಾಗಿಲುಗಳವರೆಗೂ ಹಿಂದಟ್ಟಿದರು. ಫಿಲಿಷ್ಟಿಯರ ಹೆಣಗಳು ಶಾರಯಿಮಿನಿಂದ ಗತ್, ಎಕ್ರೋನ್ ಪಟ್ಟಣಗಳವರೆಗೂ ಬಿದ್ದಿದ್ದವು.</verse>
				<verse number="53">ಅನಂತರ ಇಸ್ರಯೇಲರು ಹಿಂದಿರುಗಿ ಬಂದು, ಫಿಲಿಷ್ಟಿಯರ ಪಾಳೆಯವನ್ನು ಸೂರೆಮಾಡಿದರು.</verse>
				<verse number="54">ದಾವೀದನು ಆ ಫಿಲಿಷ್ಟಿಯನ ತಲೆಯನ್ನು ಜೆರುಸಲೇಮಿಗೆ ಒಯ್ದನು. ಅವನ ಆಯುಧಗಳನ್ನು ತನ್ನ ಗುಡಾರದಲ್ಲೇ ಇಟ್ಟುಕೊಂಡನು.</verse>
				<verse number="55">ದಾವೀದನು ಆ ಫಿಲಿಷ್ಟಿಯನೊಡನೆ ಯುದ್ಧಮಾಡಲು ಹೊರಟಿದ್ದನ್ನು ಸೌಲನು ನೋಡಿದನು. ತನ್ನ ಸೇನಾಪತಿಯಾದ ಅಬ್ನೇರನನ್ನು ಉದ್ದೇಶಿಸಿ, “ಅಬ್ನೇರನೇ, ಈ ತರುಣ ಯಾರ ಮಗ?” ಎಂದು ವಿಚಾರಿಸಿದನು. ಅದಕ್ಕೆ ಅಬ್ನೇರನು, “ಅರಸರೇ, ತಮ್ಮ ಜೀವದಾಣೆ, ನನಗೆ ಗೊತ್ತಿಲ್ಲ,” ಎಂದು ಉತ್ತರಕೊಟ್ಟನು.</verse>
				<verse number="56">ಆಗ ಅರಸನು ಅವನಿಗೆ, “ಈ ಯುವಕ ಯಾರ ಮಗನೆಂದು ವಿಚಾರಿಸು,” ಎಂದು ಆಜ್ಞಾಪಿಸಿದನು.</verse>
				<verse number="57">ದಾವೀದನು ಫಿಲಿಷ್ಟಿಯನನ್ನು ಕೊಂದು ಅವನ ತಲೆಯನ್ನು ಹಿಡಿದುಕೊಂಡು ಹಿಂದಿರುಗಿ ಬರುವಾಗ, ಅಬ್ನೇರನು ಅವನನ್ನು ಕರೆದು, ಸೌಲನ ಮುಂದೆ ನಿಲ್ಲಿಸಿದನು.</verse>
				<verse number="58">ಸೌಲನು ಅವನನ್ನು, “ತರುಣನೇ, ನೀನು ಯಾರ ಮಗ?” ಎಂದು ಕೇಳಿದನು. ಅದಕ್ಕೆ ಅವನು, “ನಾನು ಬೆತ್ಲೆಹೇಮಿನವನೂ ನಿಮ್ಮ ಸೇವಕನೂ ಆದ ಜೆಸ್ಸೆಯನ ಮಗ,” ಎಂದು ಉತ್ತರಿಸಿದನು.</verse>
			</chapter>
			<chapter number="18">
				<verse number="1">ದಾವೀದನ ಮತ್ತು ಸೌಲನ ಸಂಭಾಷಣೆ ಮುಗಿಯಿತು. ಇದಾದ ಕೂಡಲೆ ಯೋನಾತಾನನು ಹಾಗು ದಾವೀದನು ಪ್ರಾಣ ಗೆಳೆಯರಾದರು. ಯೋನಾತಾನನು ದಾವೀದನನ್ನು ತನ್ನ ಪ್ರಾಣದಂತೆಯೇ ಪ್ರೀತಿಸತೊಡಗಿದನು.</verse>
				<verse number="2">ಅಂದಿನಿಂದ ಸೌಲನು ದಾವೀದನನ್ನು ಅವನ ತಂದೆಯ ಮನೆಗೂ ಹೋಗಗೊಡದೆ ತನ್ನ ಬಳಿಯಲ್ಲೇ ಇಟ್ಟುಕೊಂಡನು.</verse>
				<verse number="3">ಯೋನಾತಾನನು ದಾವೀದನನ್ನು ತನ್ನ ಪ್ರಾಣಸ್ನೇಹಿತನನ್ನಾಗಿ ಪ್ರೀತಿಸುತ್ತಿದ್ದುದರಿಂದ ಅವನೊಂದಿಗೆ ಒಂದು ಒಪ್ಪಂದಮಾಡಿಕೊಂಡನು.</verse>
				<verse number="4">ಇದಲ್ಲದೆ ತನ್ನ ಮೈಮೇಲಿದ್ದ ನಿಲುವಂಗಿಯನ್ನು, ಯುದ್ಧವಸ್ತ್ರಗಳನ್ನು ಹಾಗು ಕತ್ತಿ, ಬಿಲ್ಲು, ನಡುಕಟ್ಟುಗಳನ್ನು ತೆಗೆದು ದಾವೀದನಿಗೆ ಕೊಟ್ಟನು.</verse>
				<verse number="5">ದಾವೀದನಾದರೋ ಸೌಲನು ಎಲ್ಲಿಗೆ ಕಳುಹಿಸಿದರೂ ಅಲ್ಲಿಗೆ ಹೋಗಿ ಎಲ್ಲವನ್ನು ವಿವೇಕದಿಂದ ಮಾಡಿ ಯಶಸ್ಸು ಪಡೆಯುತ್ತಿದ್ದನು. ಆದ್ದರಿಂದ ಸೌಲನು ಅವನನ್ನು ಸೇನಾಪತಿಯನ್ನಾಗಿ ನೇಮಿಸಿದನು. ಇದರಿಂದ ಎಲ್ಲ ಅಧಿಕಾರಿಗಳಿಗೂ ಜನಸಾಮಾನ್ಯರಿಗೂ ಸಂತೋಷವಾಯಿತು.</verse>
				<verse number="6">ದಾವೀದನು ಫಿಲಿಷ್ಟಿಯರನ್ನು ಸಂಹರಿಸಿ ಸರ್ವಸೈನಿಕರೊಡನೆ ಹಿಂದಿರುಗಿ ಬರುವಾಗ ಇಸ್ರಯೇಲರ ಎಲ್ಲ ಪಟ್ಟಣಗಳಿಂದ ಮಹಿಳೆಯರು ಹೊರಗೆ ಬಂದು, ತಾಳ ತಮ್ಮಟೆಗಳನ್ನು ಹಿಡಿದು, ಸಂತೋಷದಿಂದ ಹಾಡುತ್ತಾ, ಕುಣಿಯುತ್ತಾ, ಅರಸ ಸೌಲನನ್ನು ಎದುರುಗೊಂಡರು.</verse>
				<verse number="7">ಅವರು: ಸೌಲನು ಕೊಂದನು ಸಾವಿರಗಟ್ಟಳೆ ದಾವೀದನೋ ಕೊಂದನು ಹತ್ತುಸಾವಿರಗಟ್ಟಳೆ,” ಎಂದು ಪರಸ್ಪರ ಹಾಡಿದರು.</verse>
				<verse number="8">ಈ ಮಾತುಗಳು ಸೌಲನಿಗೆ ಹಿಡಿಸಲಿಲ್ಲ. ಅವನು ಕೋಪದಿಂದ, “ದಾವೀದನು ಹತ್ತು ಸಾವಿರಗಟ್ಟಳೆ ಕೊಂದನೆಂದೂ ನಾನು ಸಾವಿರಗಟ್ಟಳೆ ಮಾತ್ರ ಕೊಂದೆನೆಂದು ಹಾಡುತ್ತಾರಲ್ಲಾ! ಹಾಗಾದರೆ ಅವನನ್ನು ರಾಜನನ್ನಾಗಿ ಮಾಡುವುದೊಂದೇ ಕಡಿಮೆ!” ಎಂದುಕೊಂಡನು.</verse>
				<verse number="9">ಅಂದಿನಿಂದ ಸೌಲನು ದಾವೀದನ ಮೇಲೆ ಕಣ್ಣಿಟ್ಟನು.</verse>
				<verse number="10">ಮಾರನೆಯ ದಿನ ದೇವರಿಂದ ಬಂದ ದುರಾತ್ಮವೊಂದು ಸೌಲನನ್ನು ಆವರಿಸಿತು. ಅವನು ಬುದ್ಧಿಗೆಟ್ಟು ಮನೆಯೊಳಗೇ ಕೂಗಾಡತೊಡಗಿದನು. ಅವನ ಕೈಯಲ್ಲಿ ಒಂದು ಈಟಿ ಇತ್ತು. ವಾಡಿಕೆಯ ಪ್ರಕಾರ ದಾವೀದನು ಕಿನ್ನರಿ ಬಾರಿಸುತ್ತಾ ಇದ್ದನು.</verse>
				<verse number="11">ಆಗ ಸೌಲನು, “ಗೋಡೆಗೆ ಕಚ್ಚಿಕೊಳ್ಳುವಂತೆ ಈ ದಾವೀದನನ್ನು ತಿವಿಯುವೆನು,” ಎಂದುಕೊಂಡು ಅವನತ್ತ ಈಟಿಯನ್ನು ಎರಡುಸಾರಿ ಎಸೆದನು. ಎರಡು ಸಾರಿಯೂ ದಾವೀದನು ತಪ್ಪಿಸಿಕೊಂಡನು.</verse>
				<verse number="12">ಸರ್ವೇಶ್ವರ ಸೌಲನನ್ನು ತ್ಯಜಿಸಿ ದಾವೀದನೊಂದಿಗೆ ಇದ್ದರು. ಈ ಕಾರಣಕ್ಕಾಗಿ ಸೌಲನು ದಾವೀದನಿಗೆ ಭಯಪಟ್ಟನು.</verse>
				<verse number="13">ಅವನನ್ನು ತನ್ನ ಸಾನ್ನಿಧ್ಯ ಸೇವೆಯಿಂದ ತೆಗೆದು ಸೈನ್ಯದ ಒಬ್ಬ ಸಹಸ್ರಾಧಿಪತಿಯನ್ನಾಗಿ ನೇಮಿಸಿದನು. ದಾವೀದನು ದಳಪತಿಯಾಗಿ ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇದ್ದನು.</verse>
				<verse number="14">ಸರ್ವೇಶ್ವರ ಅವನೊಂದಿಗೆ ಇದ್ದುದರಿಂದ ಅವನು ಎಲ್ಲ ಕಾರ್ಯಗಳಲ್ಲಿ ವಿವೇಕದಿಂದ ವರ್ತಿಸಿ ಜಯಶಾಲಿಯಾಗುತ್ತಿದ್ದನು.</verse>
				<verse number="15">ಇದರಿಂದಾಗಿ ಸೌಲನಿಗೆ ಮತ್ತಷ್ಟು ಹೆದರಿಕೆಯುಂಟಾಯಿತು.</verse>
				<verse number="16">ಆದರೆ ಇಸ್ರಯೇಲರಿಗೆ ಹಾಗು ಯೆಹೂದ್ಯರಿಗೆ ದಾವೀದನ ಮೇಲೆ ಮಿಗಿಲಾದ ಪ್ರೀತಿ. ಏಕೆಂದರೆ ಅವನು ತಮ್ಮ ಸಂಗಡವೇ ಬಂದು ಮುಂದಾಳತ್ವ ವಹಿಸುತ್ತಿದ್ದನು.</verse>
				<verse number="17">ಒಂದು ದಿನ ಸೌಲನು, “ಇವನು ನನ್ನ ಕೈಯಿಂದ ಸಾಯಬಾರದು; ಫಿಲಿಷ್ಟಿಯರ ಕೈಯಿಂದಲೇ ಸಾಯಲಿ,” ಎಂದು ಒಂದು ಉಪಾಯ ಹೂಡಿದನು. ದಾವೀದನಿಗೆ, “ನೀನು ನನ್ನ ವೀರನಾಗಿ ಹೋಗಿ ಸರ್ವೇಶ್ವರನ ಯುದ್ಧಗಳನ್ನು ನಡೆಸು; ನಾನು ನನ್ನ ಹಿರಿಯ ಮಗಳಾದ ಮೇರಬಳನ್ನು ನಿನಗೆ ಮದುವೆಮಾಡಿಕೊಡುತ್ತೇನೆ,” ಎಂದನು.</verse>
				<verse number="18">ಅದಕ್ಕೆ ದಾವೀದನು, “ಅರಸರ ಅಳಿಯನಾಗಲು ನಾನು ಎಷ್ಟರವನು? ಇಸ್ರಯೇಲರಲ್ಲಿ ನನ್ನ ಕುಲವಾಗಲಿ, ಕುಟುಂಬವಾಗಲಿ ಎಷ್ಟರದು?” ಎಂದನು.</verse>
				<verse number="19">ಮದುವೆಮಾಡಿಕೊಡುವ ಸಮಯ ಬಂದಾಗ ಸೌಲನು ತನ್ನ ಮಗಳು ಮೇರಬಳನ್ನು ದಾವೀದನಿಗೆ ಬದಲಾಗಿ, ಮೆಹೋಲದ ಅದ್ರಿಯೇಲ್ ಎಂಬವನಿಗೆ ಕೊಟ್ಟು ಮದುವೆಮಾಡಿದನು.</verse>
				<verse number="20">ಇತ್ತ ಸೌಲನ ಮಗಳಾದ ಮೀಕಲಳು ದಾವೀದನನ್ನು ಪ್ರೀತಿಸತೊಡಗಿದಳು. ಈ ವಿಷಯ ಸೌಲನಿಗೆ ತಿಳಿದುಬಂದಾಗ ಅವನಿಗೆ ಸಂತೋಷ ಆಯಿತು.</verse>
				<verse number="21">“ಇವಳನ್ನು ಅವನಿಗೆ ಕೊಡುತ್ತೇನೆ. ಈಕೆ ಅವನಿಗೆ ಉರುಲಾಗಿರಬಲ್ಲಳು; ಫಿಲಿಷ್ಟಿಯರ ಕೈಗೆ ಇವನು ಸಿಕ್ಕಿಬೀಳುವಂತೆ ಮಾಡಬಲ್ಲಳು,” ಎಂದುಕೊಂಡನು. ದಾವೀದನಿಗೆ, “ನೀನು ನನ್ನ ಅಳಿಯನಾಗಲು ಎರಡನೇ ಸಂದರ್ಭ ಬಂದೊದಗಿದೆ,” ಎಂದು ಹೇಳಿದನು.</verse>
				<verse number="22">ಅಲ್ಲದೆ ತನ್ನ ಸೈನಿಕರಿಗೆ, \ನೀವು ದಾವೀದನಿಗೆ, 'ಅರಸರು ನಿಮ್ಮನ್ನು ಮೆಚ್ಚಿಕೊಂಡಿದ್ದಾರೆ; ಅವರ ಎಲ್ಲ ಸೇವಕರಿಗೂ ನಿಮ್ಮ ಮೇಲೆ ಪ್ರೀತಿಯಿದೆ; ನೀವು ಅರಸರ ಅಳಿಯರಾಗಲೇಬೇಕು,” ಎಂದು ಪುಸಲಾಯಿಸಿರಿ,” ಎಂದು ಗುಟ್ಟಾಗಿ ತಿಳಿಸಿದನು.</verse>
				<verse number="23">ಅಂತೆಯೇ ಆ ಸೇವಕರು ದಾವೀದನಿಗೆ ತಿಳಿಯಪಡಿಸಿದರು. ಅದಕ್ಕೆ ದಾವೀದನು, “ಅರಸರ ಅಳಿಯನಾಗುವುದು ಅಷ್ಟು ಸಾಧಾರಣ ಸಂಗತಿ ಎಂದು ನೆನೆಸುತ್ತೀರೋ? ನಾನೊಬ್ಬ ಬಡವ, ದೀನದಲಿತ,” ಎಂದುಬಿಟ್ಟನು.</verse>
				<verse number="24">ದಾವೀದನ ಪ್ರತಿಕ್ರಿಯೆಯನ್ನು ಸೇವಕರು ಸೌಲನಿಗೆ ತಿಳಿಸಿದರು.</verse>
				<verse number="25">ಆಗ ಅವನು, “ನೀವು ಹೋಗಿ ದಾವೀದನಿಗೆ, ‘ಅರಸರು ಯಾವ ದಕ್ಷಿಣೆಯನ್ನೂ ಬಯಸುವುದಿಲ್ಲ; ಆದರೆ ಅವರ ಶತ್ರುಗಳಿಗೆ ಮುಯ್ಯಿತೀರಿಸಿ ಅವರಲ್ಲಿನ ನೂರುಮಂದಿಯ ಮುಂದೊಗಲನ್ನು ತಂದುಕೊಟ್ಟರೆ ಸಾಕೆನ್ನುತ್ತಾರೆ’ ಎಂದು ತಿಳಿಸಿರಿ,” ಎಂದು ಆಜ್ಞಾಪಿಸಿದನು. (ದಾವೀದನನ್ನು ಫಿಲಿಷ್ಟಿಯರ ಕೈಯಿಂದಲೇ ಕೊಲ್ಲಿಸಬೇಕೆಂಬುದು ಅವನ ಉದ್ದೇಶವಾಗಿತ್ತು.)</verse>
				<verse number="26">ಸೇವಕರು ದಾವೀದನಿಗೆ ಹಾಗೆಯೇ ತಿಳಿಸಿದಾಗ ಅರಸನ ಅಳಿಯನಾಗಲು ಅವನು ಸಮ್ಮತಿಸಿದನು.</verse>
				<verse number="27">ನೇಮಕವಾದ ದಿನಗಳು ಮುಗಿಯುವ ಮೊದಲೇ ತನ್ನ ಸೈನಿಕರೊಡನೆ ಹೊರಟು ಫಿಲಿಷ್ಟಿಯರ ದೇಶಕ್ಕೆ ಹೋಗಿ, ಅಲ್ಲಿನ ಇನ್ನೂರು ಮಂದಿಯನ್ನು ಕೊಂದು, ಮುಂದೊಗಲುಗಳನ್ನು ತಂದು ಅರಸನ ಅಳಿಯನಾಗಲು ಬೇಕಾಗಿದ್ದ ಲೆಕ್ಕಾಚಾರವನ್ನು ಪೂರ್ತಿ ಆಗಿ ಒಪ್ಪಿಸಿದನು. ಆಗ ಸೌಲನು ತನ್ನ ಮಗಳು ಮೀಕಲಳನ್ನು ದಾವೀದನಿಗೆ ಮದುವೆಮಾಡಿಕೊಟ್ಟನು.</verse>
				<verse number="28">ಸರ್ವೇಶ್ವರ ದಾವೀದನೊಂದಿಗಿದ್ದಾರೆಂದು ಸೌಲನಿಗೆ ಮನದಟ್ಟಾಯಿತು. ತನ್ನ ಮಗಳು ಅವನನ್ನು ಬಹಳವಾಗಿ ಪ್ರೀತಿಸುತ್ತಾಳೆಂದು ಸಹ ಗೊತ್ತಾಯಿತು.</verse>
				<verse number="29">ಈ ಕಾರಣ ಅವನ ಭಯ ಮತ್ತಷ್ಟೂ ಅಧಿಕವಾಯಿತು; ದಾವೀದನನ್ನು ತನ್ನ ಜೀವಮಾನ ಪರಿಯಂತ ವೈರಿಯೆಂದು ಭಾವಿಸತೊಡಗಿದನು.</verse>
				<verse number="30">ಫಿಲಿಷ್ಟಿಯ ರಾಜರು ಯುದ್ಧಕ್ಕೆ ಬಂದಾಗಲೆಲ್ಲ ಸೌಲನ ಸೇನಾಪತಿಗಳಲ್ಲಿ ದಾವೀದನೇ ಅತ್ಯಧಿಕ ಜಯಶೀಲನಾಗಿ ಹಿಂದಿರುಗುತ್ತಿದ್ದನು. ಈ ಕಾರಣ ಅವನ ಹೆಸರು ಸುಪ್ರಸಿದ್ಧವಾಯಿತು.</verse>
			</chapter>
			<chapter number="19">
				<verse number="1">ದಾವೀದನನ್ನು ಕೊಲ್ಲಬೇಕೆಂದು ಸೌಲನು ತನ್ನ ಮಗ ಯೋನಾತಾನನಿಗೂ ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು.</verse>
				<verse number="2">ಆದುದರಿಂದ ಅವನು ದಾವೀದನಿಗೆ, “ನನ್ನ ತಂದೆ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾರೆ. ನೀನು ಜಾಗರೂಕತೆಯಿಂದಿರು; ನಾಳೆ ಬೆಳಿಗ್ಗೆ ಒಂದು ಗುಟ್ಟಾದ ಸ್ಥಳದಲ್ಲಿ ಅಡಗಿಕೊಂಡಿರು.</verse>
				<verse number="3">ನನ್ನ ತಂದೆಯ ಬಳಿಯಲ್ಲಿದ್ದು ನಿನ್ನ ಬಗ್ಗೆ ಅವರೊಡನೆ ಮಾತಾಡಿ ಗೊತ್ತಾದ ವಿಷಯವನ್ನು ನೀನು ಅವಿತುಕೊಂಡಿರುವ ಸ್ಥಳಕ್ಕೆ ಬಂದು ತಿಳಿಸುವೆನು,” ಎಂದು ಹೇಳಿದನು.</verse>
				<verse number="4">ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿದನು. “ಒಡೆಯರಾದ ತಾವು ತಮ್ಮ ಸೇವಕ ದಾವೀದನಿಗೆ ಅನ್ಯಾಯ ಮಾಡಬಾರದು; ಅವನು ನಿಮಗೆ ದ್ರೋಹ ಮಾಡಲಿಲ್ಲ; ಅವನು ಮಾಡಿದ್ದೆಲ್ಲವು ನಿಮ್ಮ ಹಿತಕ್ಕಾಗಿಯೇ.</verse>
				<verse number="5">ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಆ ಫಿಲಿಷ್ಟಿಯರನ್ನು ಕೊಂದನು; ಸರ್ವೇಶ್ವರ ಇಸ್ರಯೇಲರಿಗೆ ಮಹಾ ಜಯವನ್ನುಂಟುಮಾಡಿದರು. ನೀವೂ ಅದನ್ನು ನೋಡಿ ಸಂತೋಷಪಟ್ಟಿರಿ; ದಾವೀದನನ್ನು ನಿಷ್ಕಾರಣವಾಗಿ ಕೊಂದು ನಿರ್ದೋಷಿಯ ರಕ್ತವನ್ನು ಸುರಿಸಿ ಅಪರಾಧಕ್ಕೆ ನೀವೇಕೆ ಗುರಿ ಆಗುತ್ತೀರಿ?” ಎಂದನು.</verse>
				<verse number="6">ಸೌಲನು ಯೋನಾತಾನನ ಮಾತುಗಳನ್ನು ಆಲಿಸಿದನು. “ಸರ್ವೇಶ್ವರನಾಣೆ, ಅವನನ್ನು ಕೊಲ್ಲುವುದಿಲ್ಲ,” ಎಂದು ಪ್ರಮಾಣಮಾಡಿದನು.</verse>
				<verse number="7">ಆಗ ಯೋನಾತಾನನು ದಾವೀದನನ್ನು ಕರೆದು ಅವನಿಗೆ ಈ ಮಾತುಗಳನ್ನು ತಿಳಿಸಿ ಸೌಲನ ಬಳಿಗೆ ಕರೆದುತಂದನು. ದಾವೀದನು ಮುಂಚಿನಂತೆ ಸೌಲನ ಸನ್ನಿಧಿಯಲ್ಲೇ ಇರುವಂತೆ ಏರ್ಪಾಡಾಯಿತು.</verse>
				<verse number="8">ಫಿಲಿಷ್ಟಿಯರು ಮತ್ತೆ ಯುದ್ಧಕ್ಕೆ ಬಂದಾಗ ದಾವೀದನು ಹೋಗಿ ಅವರೊಡನೆ ಯುದ್ಧಮಾಡಿ ಅವರನ್ನು ಪೂರ್ತಿಯಾಗಿ ಸೋಲಿಸಿ ಓಡಿಸಿಬಿಟ್ಟನು.</verse>
				<verse number="9">ಒಂದು ದಿನ ಸೌಲನು ಕೈಯಲ್ಲಿ ಈಟಿಯನ್ನು ಹಿಡಿದು ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಆಗ ಸರ್ವೇಶ್ವರನಿಂದ ಬಂದ ದುರಾತ್ಮವೊಂದು ಅವನನ್ನು ಆವರಿಸಿತು.</verse>
				<verse number="10">ಒಡನೆ ಕಿನ್ನರಿಯನ್ನು ಬಾರಿಸುತ್ತಿದ್ದ ದಾವೀದನನ್ನು ಗೋಡೆಗೆ ಕಚ್ಚಿಕೊಳ್ಳುವಂತೆ ತಿವಿಯಬೇಕೆಂದು ಅವನು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಫಕ್ಕನೆ ಸೌಲನೆದುರಿನಿಂದ ಸರಿದುಕೊಂಡ ಕಾರಣ ಅದು ಗೋಡೆಯೊಳಗೆ ನಾಟಿತು. ದಾವೀದನು ಆ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು.</verse>
				<verse number="11">ಸೌಲನು ಕೂಡಲೆ ದೂತರನ್ನು ಕರೆಯಿಸಿ, “ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕು,” ಎಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ, “ನೀವು ಈ ರಾತ್ರಿಯೇ ತಪ್ಪಿಸಿಕೊಳ್ಳದೆ ಇದ್ದರೆ ನಾಳೆ ಬೆಳಿಗ್ಗೆ ಹತರಾಗುವಿರಿ,” ಎಂದು ಹೇಳಿ</verse>
				<verse number="12">ಅವನನ್ನು ಕಿಟಕಿಯಿಂದ ಕೆಳಕ್ಕಿಳಿಸಿದಳು. ಅವನು ಓಡಿಹೋಗಿ ತಪ್ಪಿಸಿಕೊಂಡನು.</verse>
				<verse number="13">ಅನಂತರ ಆಕೆ ಗೊಂಬೆಯೊಂದನ್ನು ತಂದು, ಹಾಸಿಗೆಯ ಮೇಲೆ ಮಲಗಿಸಿ, ಅದರ ಮುಖದ ಮೇಲೆ ಮೇಕೆಕೂದಲಿನಿಂದ ಮಾಡಿದ ತಲೆದಿಂಬನ್ನು ಇಟ್ಟು ಕಂಬಳಿಯನ್ನು ಹೊದಿಸಿದಳು.</verse>
				<verse number="14">ಸೌಲನ ದೂತರು ದಾವೀದನನ್ನು ಹಿಡಿಯುವುದಕ್ಕೆ ಬಂದಾಗ ಅವಳು, “ಅವರಿಗೆ ಮೈ ಚೆನ್ನಾಗಿಲ್ಲ,” ಎಂದು ಹೇಳಿ ಕಳುಹಿಸಿದಳು.</verse>
				<verse number="15">ಸೌಲನು ಪುನಃ ತನ್ನ ಆಳುಗಳಿಗೆ, “ನೀವು ಹೋಗಿ ನೋಡಿ ದಾವೀದನನ್ನು ಹಾಸಿಗೆಯೊಡನೆ ನನ್ನ ಬಳಿಗೆ ತೆಗೆದುಕೊಂಡು ಬನ್ನಿ, ಅವನನ್ನು ಕೊಂದುಹಾಕುತ್ತೇನೆ,” ಎಂದು ಆಜ್ಞಾಪಿಸಿದನು.</verse>
				<verse number="16">ಅವರು ಹೋಗಿ ನೋಡಲು, ಮುಖದ ಕಡೆ ಮೇಕೆಕೂದಲಿನಿಂದ ಮಾಡಿದ ದಿಂಬಾಗಿತ್ತು. ಹಾಸಿಗೆಯ ಮೇಲಿದ್ದುದು ಒಂದು ಗೊಂಬೆಯೆಂದು ತಿಳಿದುಬಂದಿತು.</verse>
				<verse number="17">ಸೌಲನು ಮೀಕಳಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ? ನನ್ನ ಶತ್ರುವನ್ನು ಕಳುಹಿಸಿ ಅವನು ತಪ್ಪಿಸಿಕೊಳ್ಳುವಂತೆ ಮಾಡಿದಿಯಲ್ಲವೆ?” ಎನ್ನಲು, ಆಕೆ ಅವನಿಗೆ, “’ನನ್ನನ್ನು ಕಳುಹಿಸದಿದ್ದರೆ ನಿನ್ನನ್ನು ಕೊಂದುಬಿಡುತ್ತೇನೆ’ ಎಂದು ಹೇಳಿದ,” ಎಂದಳು.</verse>
				<verse number="18">ಹೀಗೆ ದಾವೀದನು ತಪ್ಪಿಸಿಕೊಂಡು ರಾಮಾದಲ್ಲಿದ್ದ ಸಮುವೇಲನ ಬಳಿಗೆ ಬಂದನು. ಸೌಲನು ತನಗೆ ಮಾಡಿದ್ದೆಲ್ಲವನ್ನೂ ತಿಳಿಸಿದನು. ಅವರಿಬ್ಬರೂ ಹೋಗಿ ಅಲ್ಲಿನ ಒಂದು ಮಠದಲ್ಲಿ ವಾಸವಾಗಿ ಇದ್ದರು.</verse>
				<verse number="19">ದಾವೀದನು ರಾಮಾದ ಮಠದಲ್ಲಿ ಇರುವುದು ಸೌಲನಿಗೆ ಗೊತ್ತಾಯಿತು.</verse>
				<verse number="20">ಕೂಡಲೆ ಅವನನ್ನು ಹಿಡಿದುತರುವುದಕ್ಕಾಗಿ ಆಳುಗಳನ್ನು ಕಳುಹಿಸಿದನು. ಅವರು ಹೋಗಿ ಅಲ್ಲಿನ ಪ್ರವಾದಿಸಮೂಹವು ಪರವಶವಾಗಿ ಮಾತಾಡುವುದನ್ನೂ ಸಮುವೇಲನು ಅವರ ನಾಯಕನಾಗಿ ನಿಂತಿರುವುದನ್ನೂ ಕಂಡರು. ಆಗ ದೇವರ ಆತ್ಮ ಅವರ ಮೇಲೆಯೂ ಬಂದಿತು; ಅವರೂ ಪರವಶರಾಗಿ ಮಾತಾಡತೊಡಗಿದರು.</verse>
				<verse number="21">ಸೌಲನಿಗೆ ಈ ವರ್ತಮಾನ ಮುಟ್ಟಿದಾಗ ಅವನು ಬೇರೆ ಆಳುಗಳನ್ನು ಕಳುಹಿಸಿದನು. ಇವರೂ ಪರವಶರಾದರು. ಮೂರನೆಯ ಸಾರಿ ಇನ್ನೂ ಕೆಲವು ಮಂದಿ ಆಳುಗಳನ್ನು ಕಳುಹಿಸಿದನು. ಇವರೂ ಪರವಶರಾದರು.</verse>
				<verse number="22">ಆಗ ಸೌಲನು ತಾನೇ ರಾಮಾಕ್ಕೆ ಹೋಗಬೇಕೆಂದು ಹೊರಟು ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದು, “ಸಮುವೇಲ ಹಾಗು ದಾವೀದನು ಎಲ್ಲಿರುತ್ತಾರೆ?” ಎಂದು ವಿಚಾರಿಸಿದನು. ಜನರು, “ರಾಮಾದ ಮಠದಲ್ಲಿ ಇದ್ದಾರೆ,” ಎಂದು ಉತ್ತರಕೊಟ್ಟರು.</verse>
				<verse number="23">ಅವನು ಅಲ್ಲಿಂದ ರಾಮಾದ ಮಠಕ್ಕೆ ಹೋಗುವಾಗ ದೇವರ ಆತ್ಮ ಅವನ ಮೇಲೆಯೂ ಬಂದಿತು. ಅವನು ಆ ಊರನ್ನು ಮುಟ್ಟುವವರೆಗೆ ಪರವಶನಾಗಿ ಮಾತಾಡುತ್ತಾ ಹೋದನು.</verse>
				<verse number="24">ಅಲ್ಲಿಗೆ ಸೇರಿದ ಮೇಲೆ, ಅವನೂ ತನ್ನ ಬಟ್ಟೆಗಳನ್ನು ತೆಗೆದುಹಾಕಿ, ಸಮುವೇಲನ ಮುಂದೆ ಪರವಶನಾಗಿ ಮಾತಾಡುತ್ತಾ ಆ ದಿನ ಹಗಲಿರುಳು ಬೆತ್ತಲೆಯಾಗಿ ಬಿದ್ದುಕೊಂಡಿದ್ದನು. ಆದುದರಿಂದ “ಏನು, ಸೌಲನೂ ಪ್ರವಾದಿಯಾಗಿಬಿಟ್ಟನೋ?” ಎಂಬ ಗಾದೆಯುಂಟಾಯಿತು.</verse>
			</chapter>
			<chapter number="20">
				<verse number="1">ದಾವೀದನು ರಾಮಾದ ಮಠದಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದನು. “ನಿನ್ನ ತಂದೆ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನೆ; ನಾನೇನು ಮಾಡಿದೆ? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹ ಯಾವುದು?” ಎಂದನು.</verse>
				<verse number="2">ಯೋನಾತಾನನು ಅವನಿಗೆ, “ಇದು ಎಂದಿಗೂ ಆಗಲೇಬಾರದು; ನಿನಗೆ ಮರಣವಾಗಕೂಡದು. ನನ್ನ ತಂದೆ ಚಿಕ್ಕಕಾರ್ಯವನ್ನಾಗಲಿ ದೊಡ್ಡಕಾರ್ಯವನ್ನಾಗಲಿ ನನಗೆ ತಿಳಿಸದೆ ಮಾಡುವುದಿಲ್ಲ; ಇಂಥ ಕಾರ್ಯವನ್ನು ನನಗೆ ಹೇಗೆ ಮರೆಮಾಡಿಯಾರು? ಇಲ್ಲ, ಇದು ನಿಜವಲ್ಲ,” ಎಂದು ಹೇಳಿದನು.</verse>
				<verse number="3">ಅದಕ್ಕೆ ದಾವೀದನು, “ನಿನಗೆ ನಾನು ಪ್ರೀತಿಪಾತ್ರನೆಂದು ನಿನ್ನ ತಂದೆಗೆ ಗೊತ್ತಿದೆ. ಆದುದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾರೆ. ನಿನ್ನ ಜೀವದಾಣೆ, ಸರ್ವೇಶ್ವರನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಮಾತ್ರ ಅಂತರ,” ಎಂದು ಖಂಡಿತವಾಗಿ ಹೇಳಿದನು.</verse>
				<verse number="4">ಆಗ ಯೋನಾತಾನನು ದಾವೀದನಿಗೆ, “ನಾನು ನಿನಗಾಗಿ ಏನು ಮಾಡಬೇಕು ಹೇಳು, ಮಾಡುತ್ತೇನೆ,” ಎಂದನು.</verse>
				<verse number="5">ಅದಕ್ಕೆ ದಾವೀದನು, “ನಾಳೆ ಶುದ್ಧಪಾಡ್ಯಮಿ; ನಾನು ಅರಸರ ಪಂಕ್ತಿಯಲ್ಲಿ ಕುಳಿತು ಊಟಮಾಡಬೇಕಾಗಿರುವುದು; ನೀನು ಅಪ್ಪಣೆ ಕೊಟ್ಟರೆ ನಾನು ಈಗಲೆ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.</verse>
				<verse number="6">ನಿನ್ನ ತಂದೆ ನನ್ನನ್ನು ಕುರಿತು ವಿಚಾರಮಾಡಿದರೆ, ನೀನು, ‘ದಾವೀದನು ತನ್ನ ಊರಾದ ಬೆತ್ಲೆಹೇಮಿಗೆ ಹೋಗಿ ಬರುವುದಕ್ಕೆ ಅಪ್ಪಣೆಯಾಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು; ಅವನ ಗೋತ್ರದವರು ಅಲ್ಲಿ ವಾರ್ಷಿಕ ಬಲಿದಾನ ಮಾಡುತ್ತಾರಂತೆ,’ ಎಂದು ಹೇಳು.</verse>
				<verse number="7">ಅವರು ‘ಹಾಗೆಯೇ ಆಗಲಿ’ ಎಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು; ಸಿಟ್ಟುಮಾಡಿದರೆ ಅವರಿಂದ ನನಗೆ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ.</verse>
				<verse number="8">ಸೇವಕನ ಮೇಲೆ ದಯವಿರಲಿ. ನೀನು ಸರ್ವೇಶ್ವರನ ಸನ್ನಿಧಿಯಲ್ಲಿ ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿರುವೆಯಲ್ಲವೆ? ನಾನು ಅಪರಾಧಿಯಾಗಿದ್ದರೆ, ನನ್ನನ್ನು ನಿನ್ನ ತಂದೆಗೆ ಒಪ್ಪಿಸಬೇಕಾಗಿಲ್ಲ, ನೀನೆ ಕೊಂದುಹಾಕು,” ಎಂದು ಹೇಳಿದನು.</verse>
				<verse number="9">ಯೋನಾತಾನನು ಅವನಿಗೆ, “ಇದು ಆಗಲೇಬಾರದು; ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ ಅದನ್ನು ನಿನಗೆ ನಾನು ತಿಳಿಸದಿರುವೆನೇ?” ಎಂದನು.</verse>
				<verse number="10">ದಾವೀದನು, “ನಿನ್ನ ತಂದೆ ಬಿರುನುಡಿಯಿಂದ ಉತ್ತರಕೊಟ್ಟರೆ ಅದನ್ನು ಯಾರ ಮುಖಾಂತರವಾಗಿ ನನಗೆ ತಿಳಿಸುವೆ?” ಎಂದು ಅವನನ್ನು ಕೇಳಿದನು.</verse>
				<verse number="11">ಯೋನಾತಾನನು ಅವನಿಗೆ, “ನಾವು ಅಡವಿಗೆ ಹೋಗೋಣ ಬಾ,” ಎಂದು ಹೇಳಿದನು.</verse>
				<verse number="12">ಅವರಿಬ್ಬರೂ ಅಡವಿಗೆ ಹೋದರು. ಅಲ್ಲಿ ಯೋನಾತಾನನು ದಾವೀದನಿಗೆ, “ಇಸ್ರಯೇಲ್ ದೇವರಾದ ಸರ್ವೇಶ್ವರನೇ ಸಾಕ್ಷಿ! ನಾನು ನಾಳೆ ಇಲ್ಲವೆ ನಾಡಿದ್ದು ನಿನ್ನ ವಿಷಯದಲ್ಲಿ ನನ್ನ ತಂದೆಯೊಡನೆ ಮಾತಾಡಿ, ನಿನ್ನ ಮೇಲೆ ಅವರಿಗೆ ದಯೆಯುಂಟೆಂದು ಗೊತ್ತಾದರೆ ಕೂಡಲೆ ನಿನಗೆ ತಿಳಿಯಪಡಿಸುವೆನು.</verse>
				<verse number="13">ನನ್ನ ತಂದೆ ನಿನಗೆ ಕೇಡುಮಾಡಲು ಮನಸ್ಸುಮಾಡಿದ್ದಾರೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ ನೀನು ತಪ್ಪಿಸಿಕೊಂಡು ಸುರಕ್ಷಿತನಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ, ಸರ್ವೇಶ್ವರ ನನಗೆ ಏನು ಬೇಕಾದರೂ ಮಾಡಲಿ. ಅವರು ನನ್ನ ತಂದೆಯೊಂದಿಗೆ ಇದ್ದಹಾಗೆ ನಿನ್ನೊಂದಿಗೂ ಇರಲಿ.</verse>
				<verse number="14">ನೀನು ಸರ್ವೇಶ್ವರಸ್ವಾಮಿಯನ್ನು ಸ್ಮರಿಸಿ ಜೀವಮಾನದುದ್ದಕ್ಕೂ ನನಗೆ ಕೃಪೆತೋರಿಸು;</verse>
				<verse number="15">ನಾನು ಸತ್ತನಂತರ ನನ್ನ ಮನೆಯ ಮೇಲೂ ಶಾಶ್ವತವಾಗಿ ನಿನ್ನ ದಯೆಯಿರಲಿ. ಸರ್ವೇಶ್ವರ ನಿನ್ನ ಶತ್ರುಗಳನ್ನೆಲ್ಲ ಭೂಮಿಯಿಂದ ತೆಗೆದುಹಾಕಿದ ಮೇಲೂ ಅದು ನನ್ನ ಮನೆಯಿಂದ ಅಗಲದಿರಲಿ.</verse>
				<verse number="16">ಅಗಲಿದರೆ, ಸರ್ವೇಶ್ವರನೇ ಶತ್ರುಗಳ ಕೈಯಿಂದ ದಾವೀದನಿಗೆ ಮುಯ್ಯಿ ತೀರಿಸಲಿ!” ಎಂದು ಹೇಳಿ ಅವನ ಮನೆಯವರೊಡನೆ ಒಪ್ಪಂದ ಮಾಡಿಕೊಂಡನು.</verse>
				<verse number="17">ತಾನು ದಾವೀದನನ್ನು ಸ್ವಂತ ಪ್ರಾಣದಂತೆ ಪ್ರೀತಿಸುತ್ತಾ ಇದ್ದುದರಿಂದ, ಆ ಪ್ರೀತಿಸಾಕ್ಷಿಯಾಗಿ ಅವನಿಂದ ಪ್ರಮಾಣಮಾಡಿಸಿದನು.</verse>
				<verse number="18">ಯೋನಾತಾನನು ದಾವೀದನಿಗೆ, “ನಾಳೆಶುದ್ಧಪಾಡ್ಯಮಿ; ನಿನ್ನ ಸ್ಥಳ ಬರಿದಾಗಿರುವುದನ್ನು ಅರಸನು ಕಂಡು ನಿನ್ನ ವಿಷಯವಾಗಿ ವಿಚಾರಿಸುವನು.</verse>
				<verse number="19">ನೀನು ಮೂರನೆಯ ದಿನದಲ್ಲಿ ಮೊದಲು ಅಡಗಿಕೊಂಡಿದ್ದ ಸ್ಥಳಕ್ಕೆ ಬೇಗ ಬಂದು ಅಲ್ಲಿನ ಕಲ್ಲುಕುಪ್ಪೆಯ ಬಳಿಯಲ್ಲಿ ಕುಳಿತುಕೊಂಡಿರು.</verse>
				<verse number="20">ನಾನು ಗುರಿಯಿಟ್ಟವನೋ ಎಂಬಂತೆ ಅದರ ಕಡೆಗೆ ಮೂರು ಬಾಣಗಳನ್ನು ಎಸೆದು ಕೂಡಲೆ ಅವುಗಳನ್ನು ತರುವುದಕ್ಕಾಗಿ ನನ್ನ ಆಳನ್ನು ಕಳುಹಿಸುವೆನು.</verse>
				<verse number="21">ನಾನು ಅವನಿಗೆ, ‘ಬಾಣಗಳು ಈಚೆ ಬಿದ್ದಿರುತ್ತವೆ; ಅವುಗಳನ್ನು ತೆಗೆದುಕೊಂಡು ಬಾ’ ಎಂದು ಹೇಳಿದರೆ ನೀನು ಬಾ; ಸರ್ವೇಶ್ವರನಾಣೆ, ಯಾವ ಕೇಡೂ ಸಂಭವಿಸದೆ ಸುರಕ್ಷಿತನಾಗಿರುವೆ.</verse>
				<verse number="22">ಆದರೆ, ‘ಬಾಣಗಳು ಆಚೆ ಬಿದ್ದಿರುತ್ತವೆ,’ ಎಂದು ಹೇಳಿದರೆ ಹೊರಟುಹೋಗು. ನೀನು ಹೋಗುವುದೇ ಸರ್ವೇಶ್ವರನ ಚಿತ್ತ.</verse>
				<verse number="23">ನಮ್ಮಿಬ್ಬರ ಒಪ್ಪಂದಕ್ಕೆ ಸರ್ವೇಶ್ವರಸ್ವಾಮಿಯೇ ನಿತ್ಯಸಾಕ್ಷಿಯಾಗಿರುವರು,” ಎಂದನು.</verse>
				<verse number="24">ದಾವೀದನು ಅಡವಿಯಲ್ಲಿ ಅಡಗಿಕೊಂಡನು.</verse>
				<verse number="25">ಅರಸನು ಶುದ್ಧಪಾಡ್ಯಮಿಯ ದಿವಸ ಪದ್ಧತಿಯ ಪ್ರಕಾರ ಗೋಡೆಯ ಬಳಿಯಲ್ಲಿ ಇರುವ ತನ್ನ ಆಸನದ ಮೇಲೆ ಭೋಜನಕ್ಕೆ ಕುಳಿತುಕೊಂಡನು. ಅವನ ಪಾರ್ಶ್ವದಲ್ಲಿ ಅಬ್ನೇರನೂ ಕುಳಿತುಕೊಂಡನು. ಸೌಲನು ದಾವೀದನ ಸ್ಥಳ ಬರಿದಾಗಿರುವುದನ್ನು ಕಂಡರೂ</verse>
				<verse number="26">ಆ ದಿವಸ ಅವನ ವಿಷಯವಾಗಿ ಏನೂ ಹೇಳಲಿಲ್ಲ. “ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಹೊಲೆಯಾಗಿರಬಹುದು, ತನ್ನನ್ನು ಇನ್ನೂ ಶುದ್ಧಪಡಿಸಿಕೊಳ್ಳದೆ ಇರಬಹುದು,” ಎಂದುಕೊಂಡನು.</verse>
				<verse number="27">ಮರುದಿವಸದಲ್ಲಿಯೂ, ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿಯೂ, ದಾವೀದನ ಸ್ಥಾನ ಬರಿದಾಗಿದ್ದುದರಿಂದ ಸೌಲನು, “ಜೆಸ್ಸೆಯನ ಮಗ ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಏಕೆ ಬರಲಿಲ್ಲ?” ಎಂದು ತನ್ನ ಮಗ ಯೋನಾತಾನನನ್ನು ಕೇಳಿದನು.</verse>
				<verse number="28">ಅದಕ್ಕೆ ಯೋನಾತಾನನು, “ದಾವೀದನು, ಬೆತ್ಲೆಹೇಮಿನಲ್ಲಿ ತಮ್ಮ ಗೋತ್ರದವರು ಬಲಿದಾನ ಮಾಡುತ್ತಾರೆ;</verse>
				<verse number="29">ತನ್ನ ಅಣ್ಣ ಅದಕ್ಕಾಗಿ ನನ್ನನ್ನು ಕರೆದಿದ್ದಾನೆ; ತಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿಬರಲು ಅಪ್ಪಣೆಯಾಗಬೇಕು, ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಆದುದರಿಂದ ಅವನು ಅರಸರ ಪಂಕ್ತಿಗೆ ಬರಲಿಲ್ಲ,” ಎಂದು ಉತ್ತರಕೊಟ್ಟನು.</verse>
				<verse number="30">ಆಗ ಸೌಲನು ಸಿಡಿದೆದ್ದು ಯೋನಾತಾನನಿಗೆ, “ಎಲೋ, ದುಷ್ಟದಾಸಿಯ ಮಗನೇ, ನೀನು ಜೆಸ್ಸೆಯನ ಮಗನೊಡನೆ ಸ್ನೇಹದಿಂದ ಇರುವುದು ನನಗೆ ಗೊತ್ತಿಲ್ಲವೇ? ಈ ಸ್ನೇಹದಿಂದ ನಿನಗೂ ಹೆತ್ತವಳಿಗೂ ಮಾನಭಂಗ ತರುತ್ತಾ ಇರುವೆ.</verse>
				<verse number="31">ಆ ಜೆಸ್ಸೆಯನ ಮಗ ಭೂಲೋಕದಲ್ಲಿ ಇರುವವರೆಗೆ ನಿನಗಾಗಲಿ, ರಾಜನಾಗುವ ಹಕ್ಕುಬಾಧ್ಯತೆಗಳಿಗಾಗಲಿ ಉಳಿವಿಲ್ಲ. ಆದುದರಿಂದ ಹೋಗು, ಅವನನ್ನು ಕರೆಯಿಸಿ ನನ್ನ ಬಳಿಗೆ ತೆಗೆದುಕೊಂಡು ಬಾ; ಅವನು ಸಾಯಬೇಕು,” ಎಂದನು.</verse>
				<verse number="32">ಅದಕ್ಕೆ ಯೋನಾತಾನನು, “ಅವನು ಏಕೆ ಸಾಯಬೇಕು? ಅವನು ಏನು ಮಾಡಿದ್ದಾನೆ?” ಎಂದು ತಂದೆಯನ್ನು ಕೇಳಿದನು.</verse>
				<verse number="33">ಕೂಡಲೆ ಸೌಲನು ಅವನನ್ನು ತಿವಿಯುವವನಂತೆ ಈಟಿಯನ್ನೆಸೆದನು. ತನ್ನ ತಂದೆ ನಿಜವಾಗಿಯೂ ದಾವೀದನನ್ನು ಕೊಲ್ಲುವುದಕ್ಕೆ ನಿಶ್ಚಯಿಸಿದ್ದಾನೆಂಬುದು ಯೋನಾತಾನನಿಗೆ ಅರಿವಾಯಿತು.</verse>
				<verse number="34">ಅವನು ಬಲುಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು. ತನ್ನ ತಂದೆ, ದಾವೀದನನ್ನು ಅಪಮಾನಪಡಿಸಿದ್ದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿವಸ ಊಟಮಾಡಲೇ ಇಲ್ಲ.</verse>
				<verse number="35">ಅವನು ಮರುದಿವಸ ಮುಂಜಾನೆ ಒಬ್ಬ ಹುಡುಗನನ್ನು ಕರೆದುಕೊಂಡು ದಾವೀದನನ್ನು ನೋಡುವುದಕ್ಕಾಗಿ ಅಡವಿಗೆ ಹೋದನು.</verse>
				<verse number="36">ಹುಡುಗನಿಗೆ, “ಬೇಗ ಹೋಗಿ ನಾನು ಎಸೆದ ಬಾಣಗಳನ್ನು ಕೂಡಿಸಿಕೊಂಡು ಬಾ,” ಎಂದು ಹೇಳಿದನು. ಆ ಹುಡುಗ ಹೋಗುತ್ತಿರುವಾಗ ಯೋನಾತಾನನು ಬಾಣವನ್ನು ಅವನ ಆಚೆಗೆ ಎಸೆದನು.</verse>
				<verse number="37">ಹುಡುಗನು ಬಾಣಬಿದ್ದ‍ ಸ್ಥಳಕ್ಕೆ ಬಂದಾಗ ಯೋನಾತಾನನು ಗಟ್ಟಿಯಾಗಿ ಅವನಿಗೆ, “ಬಾಣ ಇನ್ನೂ ಆಚೆ ಬಿದ್ದಿದೆ.</verse>
				<verse number="38">ಬೇಗ ಓಡು, ನಿಲ್ಲಬೇಡ,” ಎಂದು ಕೂಗಿದನು. ಹುಡುಗನು ಬಾಣಗಳನ್ನು ಕೂಡಿಸಿಕೊಂಡು ಯಜಮಾನನ ಬಳಿಗೆ ಬಂದನು.</verse>
				<verse number="39">ಇದರ ರಹಸ್ಯ ಯೋನಾತಾನನಿಗೆ ಹಾಗು ದಾವೀದನಿಗೆ ಗೊತ್ತಾಯಿತೇ ಹೊರತು ಆ ಹುಡುಗನಿಗೆ ಗೊತ್ತಾಗಲಿಲ್ಲ.</verse>
				<verse number="40">ಯೋನಾತಾನನು ತನ್ನ ಆಯುಧಗಳನ್ನು ಹುಡುಗನ ಕೈಯಲ್ಲಿ ಕೊಟ್ಟು, “ಇವುಗಳನ್ನು ಊರಿಗೆ ತೆಗೆದುಕೊಂಡು ಹೋಗು,” ಎಂದು ಹೇಳಿದನು.</verse>
				<verse number="41">ಹುಡುಗನು ಹೋಗುತ್ತಲೇ ದಾವೀದನು ಕಲ್ಲುಕುಪ್ಪೆಯ ಬಳಿಯಿಂದೆದ್ದು ಬಂದು ಮೂರು ಸಾರಿ ಸಾಷ್ಟಾಂಗವಾಗಿ ಯೋನಾತಾನನನ್ನು ವಂದಿಸಿದನು. ಅವರು ಒಬ್ಬರನ್ನೊಬ್ಬರು ಅಪ್ಪಿಕೊಂಡು ಅತ್ತರು. ದಾವೀದನು ಬಹಳವಾಗಿ ಅತ್ತನು.</verse>
				<verse number="42">ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು; ನಾವು ಸರ್ವೇಶ್ವರನ ಹೆಸರಿನಲ್ಲಿ ಆಣೆಯಿಟ್ಟು ಒಪ್ಪಂದಮಾಡಿಕೊಂಡಿದ್ದೇವಲ್ಲವೆ? ಅವರೇ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಂಬಂಧಸಾಕ್ಷಿಯಾಗಿರಲಿ,” ಎಂದು ಹೇಳಿದನು. ಬಳಿಕ ದಾವೀದನು ಹೊರಟುಹೋದನು. ಇತ್ತ ಯೋನಾತಾನನು ಊರಿಗೆ ಹಿಂದಿರುಗಿದನು.</verse>
			</chapter>
			<chapter number="21">
				<verse number="1">ದಾವೀದನು ನೋಬ್ ಊರಲ್ಲಿದ್ದ ಯಾಜಕ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಭಯಭಕ್ತಿಯಿಂದ ಎದುರುಗೊಂಡನು. “ನಿಮ್ಮ ಜೊತೆಯಲ್ಲಿ ಒಬ್ಬನಾದರೂ ಇಲ್ಲವಲ್ಲಾ; ನೀವು ಒಬ್ಬರೇ ಬಂದದ್ದೇಕೆ?” ಎಂದು ಅವನನ್ನು ಕೇಳಿದನು.</verse>
				<verse number="2">ಅವನು, “ಅರಸರು ಒಂದು ಕೆಲಸವನ್ನು ಆಜ್ಞಾಪಿಸಿ ಇದನ್ನು ಯಾರಿಗೂ ತಿಳಿಸಬಾರದೆಂದು ಕಟ್ಟಪ್ಪಣೆಮಾಡಿ ನನ್ನನ್ನು ಕಳುಹಿಸಿದ್ದಾರೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದೇನೆ.</verse>
				<verse number="3">ಈಗ ನಿನ್ನಲ್ಲಿ ಏನಾದರೂ ಉಂಟೋ? ನಾಲ್ಕೈದು ರೊಟ್ಟಿಗಳಾದರೂ ಬೇರೆ ಯಾವ ಆಹಾರಪದಾರ್ಥವಾದರೂ ಇದ್ದರೆ ನನಗೆ ಕೊಡು,” ಎಂದನು.</verse>
				<verse number="4">ಆ ಯಾಜಕನು ದಾವೀದನಿಗೆ, “ನನ್ನ ಬಳಿಯಲ್ಲಿ ಪವಿತ್ರವಾದ ಮೀಸಲು ರೊಟ್ಟಿಗಳ ಹೊರತು ಬೇರೆ ರೊಟ್ಟಿಗಳಿಲ್ಲ; ನಿಮ್ಮ ಆಳುಗಳು ಸದ್ಯಕ್ಕೆ ಸಂಗಬಿಟ್ಟವರಾಗಿದ್ದರೆ ಅವುಗಳನ್ನು ಕೊಡಬಹುದು,” ಎಂದನು.</verse>
				<verse number="5">ದಾವೀದನು, “ನಮ್ಮ ಎಲ್ಲಾ ಯುದ್ಧ ಪ್ರಯಾಣಗಳಲ್ಲಿ ಸ್ತ್ರೀಸಂಗ ನಿಷೇಧಮಾಡುವಂತೆ ಈಗಲೂ ಮಾಡಿದ್ದೇವೆ. ನಾವು ಸಾಧಾರಣ ಕಾರ್ಯಕ್ಕೆ ಹೊರಟಾಗಲೂ ಆಳುಗಳ ಸಾಮಾಗ್ರಿಗಳು ಪರಿಶುದ್ಧವಾಗಿರುತ್ತಿದ್ದವು. ಈ ದಿನವಂತು ಅವು ಮತ್ತಷ್ಟು ಪರಿಶುದ್ಧವಾಗಿ ಇರುತ್ತವಲ್ಲವೇ?’ ಎಂದು ಉತ್ತರಕೊಟ್ಟನು.</verse>
				<verse number="6">ಬಿಸಿರೊಟ್ಟಿಗಳನ್ನು ಅರ್ಪಿಸಿದ ಆ ದಿನದಲ್ಲಿ ಸರ್ವೇಶ್ವರನ ಸನ್ನಿಧಿಯಿಂದ ತೆಗೆಯಲಾದ ನೈವೇದ್ಯದ ಮೊದಲ ರೊಟ್ಟಿಗಳ ಹೊರತು ಅಲ್ಲಿ ಬೇರೆ ರೊಟ್ಟಿಗಳಿರಲಿಲ್ಲ. ಆದುದರಿಂದ ಯಾಜಕನು ಆ ಪರಿಶುದ್ಧವಾದ ರೊಟ್ಟಿಗಳನ್ನೇ ಕೊಟ್ಟುಬಿಟ್ಟನು.</verse>
				<verse number="7">ಅದೇ ದಿನ ಸೌಲನ ಪಶುಪಾಲರಲ್ಲಿ ಮುಖ್ಯಸ್ಥನಾದ ದೋಯೇಗನೆಂಬ ಎದೋಮ್ಯನು ಸರ್ವೇಶ್ವರನ ಆಲಯದಲ್ಲಿ ತಂಗಬೇಕಾಗಿತ್ತು.</verse>
				<verse number="8">ದಾವೀದನು ಅಹೀಮೆಲೆಕನನ್ನು, “ಅರಸನ ಕಾರ್ಯ ತುರ್ತಾದದ್ದು. ಆದ್ದರಿಂದ ಕತ್ತಿಯನ್ನಾಗಲಿ ಬೇರೆ ಆಯುಧವನ್ನಾಗಲಿ ತೆಗೆದುಕೊಂಡು ಬರಲು ಆಗಲಿಲ್ಲ. ನಿನ್ನ ಬಳಿಯಲ್ಲಿ ಭರ್ಜಿಯಾಗಲಿ, ಕತ್ತಿಯಾಗಲಿ ಇಲ್ಲವೇ?’ ಎಂದು ಕೇಳಿದನು.</verse>
				<verse number="9">ಅವನು, “ನೀವು ಏಲಾ ತಗ್ಗಿನಲ್ಲಿ ಕೊಂದುಹಾಕಿದ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನು ಬಟ್ಟೆಯಲ್ಲಿ ಸುತ್ತಿ ಏಫೋದಿನ ಹಿಂದೆ ಇಡಲಾಗಿದೆ; ಬೇಕಾದರೆ ಅದನ್ನು ತೆಗೆದುಕೊಳ್ಳಿ. ಅದರ ಹೊರತು ನನ್ನ ಬಳಿ ಬೇರೊಂದಿಲ್ಲ,” ಎಂದು ಉತ್ತರಕೊಟ್ಟನು. ದಾವೀದನು, “ಅದಕ್ಕೆ ಸಮಾನವಾದದ್ದು ಮತ್ತೊಂದಿಲ್ಲ, ಅದನ್ನೇ ಕೊಡು,” ಎಂದು ಹೇಳಿ ತೆಗೆದುಕೊಂಡನು.</verse>
				<verse number="10">ದಾವೀದನು ಸೌಲನ ಭಯದಿಂದ ಅದೇ ದಿವಸ ಗತ್ ಊರಿನ ರಾಜನಾದ ಆಕೀಷನ ಬಳಿಗೆ ಓಡಿಹೋದನು.</verse>
				<verse number="11">ಆಕೀಷನ ಸೇವಕರು, “’ಸೌಲನು ಕೊಂದನು ಸಾವಿರಗಟ್ಟಳೆ, ದಾವೀದನು ಕೊಂದನು ಹತ್ತುಸಾವಿರಗಟ್ಟಳೆ’ ಎಂಬುದಾಗಿ ಮಹಿಳೆಯರು ಕುಣಿಯುತ್ತಾ ಹಾಡಿದ್ದು ಇವನನ್ನು ಕುರಿತಲ್ಲವೇ?’ ಎಂದು ಮಾತಾಡಿಕೊಂಡರು.</verse>
				<verse number="12">ದಾವೀದನು ಈ ಮಾತುಗಳನ್ನು ಕೇಳುತ್ತಲೆ, ಗತ್ ಊರಿನ ರಾಜನಾದ ಆಕೀಷನಿಗೆ ಬಹಳವಾಗಿ ಹೆದರಿದನು.</verse>
				<verse number="13">ಅವನ ಸೇವಕರ ಮುಂದೆ ತನ್ನ ಬುದ್ಧಿಯನ್ನು ಮಾರ್ಪಡಿಸಿಕೊಂಡು, ಗಡ್ಡದ ಮೇಲೆಲ್ಲಾ ಜೊಲ್ಲು ಸುರಿಸುತ್ತಾ, ಕದಗಳ ಮೇಲೆ ಗೀಜುತ್ತಾ ತನ್ನನ್ನು ಹುಚ್ಚನಂತೆ ತೋರಿಸಿಕೊಂಡನು.</verse>
				<verse number="14">ಆಗ ಆಕೀಷನು ತನ್ನ ಸೇವಕರಿಗೆ, “ಈ ಮನುಷ್ಯ ಹುಚ್ಚನೆಂದು ನಿಮಗೆ ಕಾಣುವುದಿಲ್ಲವೇ? ಇವನನ್ನು ನನ್ನ ಹತ್ತಿರ ಏಕೆ ತಂದಿರಿ?</verse>
				<verse number="15">ನನ್ನ ಬಳಿ ಹುಚ್ಚರು ಕಡಿಮೆಯೆಂದು ನೆನೆಸಿ ನನ್ನನ್ನು ಮರುಳುಮಾಡಿ ಬೇಸರಗೊಳಿಸುವುದಕ್ಕಾಗಿ ಇವನನ್ನು ತಂದಿರೋ? ಇಂಥವನು ನನ್ನ ಮನೆಗೆ ಬರಬೇಕಿತ್ತೋ?’ ಎಂದನು.</verse>
			</chapter>
			<chapter number="22">
				<verse number="1">ದಾವೀದನು ಅಲ್ಲಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಹೋದನು. ಈ ಸಮಾಚಾರ, ಅವನ ಅಣ್ಣಂದಿರಿಗೂ ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಿತು. ಅವರೂ ಬಂದು ಅವನನ್ನು ಸೇರಿಕೊಂಡರು.</verse>
				<verse number="2">ಇದಲ್ಲದೆ ಶೋಷಿತರು, ಸಾಲಗಾರರು ಹಾಗು ಮನನೊಂದವರು ಆಗಿದ್ದ ಜನಸಾಮಾನ್ಯರು ಬಂದು ಅವನನ್ನು ಆಶ್ರಯಿಸಿಕೊಂಡರು. ಹೀಗೆ ಅವನು ಸುಮಾರು ನಾನೂರು ಜನರಿಗೆ ನಾಯಕನಾದನು.</verse>
				<verse number="3">ಅನಂತರ ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ದೇಶದ ಮಿಚ್ಪೆ ಎಂಬಲ್ಲಿಗೆ ಕರೆದುಕೊಂಡು ಹೋದನು. ಅಲ್ಲಿನ ರಾಜನನ್ನು, “ದೇವರು ನನಗೆ ಮಾರ್ಗತೋರಿಸುವವರೆಗೂ ನನ್ನ ತಂದೆತಾಯಿಗಳು ನಿಮ್ಮ ಬಳಿಯಲ್ಲಿರುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಬೇಡಿಕೊಂಡನು.</verse>
				<verse number="4">ಅವರನ್ನು ಆ ರಾಜನ ಬಳಿಯಲ್ಲಿ ಬಿಟ್ಟನು. ದಾವೀದನು ದುರ್ಗದಲ್ಲಿದ್ದ ಕಾಲವೆಲ್ಲಾ ಅವನ ತಂದೆತಾಯಿಗಳು ಆ ರಾಜನ ಬಳಿಯಲ್ಲೇ ವಾಸವಾಗಿದ್ದರು.</verse>
				<verse number="5">ಗಾದ್ ಪ್ರವಾದಿಯು ದಾವೀದನಿಗೆ, “ನೀನು ಈ ದುರ್ಗದಲ್ಲಿರಬಾರದು; ಇದನ್ನು ಬಿಟ್ಟು ಯೆಹೂದ ನಾಡಿಗೆ ಹೋಗು,” ಎಂದು ಹೇಳಿದ್ದರಿಂದ ಅವನು ಹೆರೆತ್ ಮರುಭೂಮಿಗೆ ಹೋದನು.</verse>
				<verse number="6">ಒಂದು ದಿನ ಸೌಲನು ತನ್ನ ಎಲ್ಲಾ ಪರಿವಾರದವರ ನಡುವೆ ಕೈಯಲ್ಲಿ ಭರ್ಜಿಯನ್ನು ಹಿಡಿದುಕೊಂಡು ಗಿಬೆಯ ಗುಡ್ಡದ ಪಿಚುಲವೃಕ್ಷದ ಕೆಳಗೆ ಕುಳಿತುಕೊಂಡನು. “ದಾವೀದನೂ ಅವನ ಜನರೂ ಅಡಗಿಕೊಂಡಿರುವ ಸ್ಥಳ ಗೊತ್ತಾಗಿದೆ,” ಎಂಬ ಸುದ್ದಿ ಅವನಿಗೆ ಮುಟ್ಟಿತು.</verse>
				<verse number="7">ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಕುಲಪುತ್ರರೇ ಕೇಳಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ಮಾಡುವುದೇಕೆ? ಜೆಸ್ಸೆಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಕೊಡುತ್ತಾನೆಯೇ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುತ್ತಾನೆಯೆ?</verse>
				<verse number="8">ನನ್ನ ಮಗನು ಜೆಸ್ಸೆಯನ ಮಗನೊಡನೆ ಒಪ್ಪಂದಮಾಡಿಕೊಂಡದ್ದನ್ನು ನಿಮ್ಮಲ್ಲಿ ಒಬ್ಬನಾದರೂ ನನಗೆ ತಿಳಿಸಲಿಲ್ಲ. ನನ್ನ ಸೇವಕನೊಬ್ಬ ನನಗೆ ವಿರೋಧವಾಗಿ ಒಳಸಂಚುಮಾಡುವ ಹಾಗೆ ನನ್ನ ಮಗನೇ ಅವನನ್ನು ಎತ್ತಿಕಟ್ಟಿದ್ದಾನೆಂದು ಒಬ್ಬನಾದರೂ ನನಗೆ ಏಕೆ ತಿಳಿಸಲಿಲ್ಲ? ನನ್ನ ಹಿತಚಿಂತೆ ನಿಮಗೆ ಕಿಂಚಿತ್ತೂ ಇಲ್ಲ,” ಎಂದನು.</verse>
				<verse number="9">ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು, “ಆ ಜೆಸ್ಸೆಯನ ಮಗ ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ನಾನು ನೋಡಿದೆ.</verse>
				<verse number="10">ಆ ಯಾಜಕ ಇವನಿಗೆ ಸರ್ವೇಶ್ವರನ ಚಿತ್ತವನ್ನು ತಿಳಿಸಿ, ಆಹಾರವನ್ನೂ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು,” ಎಂದು ಹೇಳಿದನು.</verse>
				<verse number="11">ಕೂಡಲೆ ಸೌಲನು ಅಹೀಟೂಬನ ಮಗನೂ ಯಾಜಕನೂ ಆಗಿದ್ದ ಅಹೀಮೆಲೆಕನನ್ನು ಹಾಗು ಅವನ ಕುಟುಂಬಕ್ಕೆ ಸೇರಿದ್ದ ನೋಬದ ಬೇರೆ ಎಲ್ಲಾ ಯಾಜಕರನ್ನೂ ಬರಮಾಡಿದನು. ಅವರೆಲ್ಲರೂ ಅರಸನ ಸನ್ನಿಧಿಗೆ ಬಂದರು.</verse>
				<verse number="12">ಅರಸನು, “ಅಹೀಟೂಬನ ಮಗನೇ, ನಾನು ಕೇಳುವ ಪ್ರಶ್ನೆಗೆ ಉತ್ತರಕೊಡು,” ಎಂದನು. ಅದಕ್ಕೆ ಅವನು, “ಒಡೆಯಾ, ಅಪ್ಪಣೆಯಾಗಲಿ,” ಎಂದನು.</verse>
				<verse number="13">ಆಗ ಸೌಲನು, “ನೀನು ನನಗೆ ವಿರೋಧವಾಗಿ ಜೆಸ್ಸೆಯನ ಮಗನೊಡನೆ ಒಳಸಂಚುಮಾಡಿದ್ದೇಕೆ? ಅವನು ನನಗೆ ವಿರೋಧವಾಗಿ ಎದ್ದು ನನ್ನ ಜೀವಕ್ಕಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿ ಹಾಗು ಕತ್ತಿಯನ್ನು ಕೊಟ್ಟು ದೈವೋತ್ತರವನ್ನು ತಿಳಿಸಿದ್ದೇಕೆ?” ಎಂದು ಕೇಳಿದನು.</verse>
				<verse number="14">ಅಹೀಮೆಲೆಕನು, “ನಿಮ್ಮ ಎಲ್ಲಾ ಸೇವಕರಲ್ಲಿ, ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾರಿದ್ದಾನೆ? ದಾವೀದನು ನಿಮ್ಮ ಆಲೋಚಕರಲ್ಲೊಬ್ಬನೂ ತಮ್ಮ ಮನೆಯವರಲ್ಲಿ ಗೌರವಾನ್ವಿತನೂ ಆಗಿದ್ದಾನಲ್ಲವೇ?</verse>
				<verse number="15">ನಾನು ಅವರ ಪರವಾಗಿ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೇ? ಇಲ್ಲವೇ ಇಲ್ಲ, ಅರಸರು ತಮ್ಮ ಸೇವಕನಾದ ನನ್ನ ಮೇಲೆ ಹಾಗು ನನ್ನ ಮನೆಯವರ ಮೇಲೆ ಇಂಥ ಅಪವಾದವನ್ನು ಹೊರಿಸಬಾರದು. ಈ ವಿಷಯದಲ್ಲಿ ತಮ್ಮ ಸೇವಕನಾದ ನನಗೆ ಸ್ವಲ್ಪವೂ ಗೊತ್ತಿರಲಿಲ್ಲ,” ಎಂದು ಉತ್ತರಕೊಟ್ಟನು.</verse>
				<verse number="16">ಆಗ ಅರಸನು ಅವನಿಗೆ, “ಅಹೀಮೆಲೆಕನೇ, ನೀನೂ ನಿನ್ನ ಮನೆಯವರೂ ಸಾಯಲೇಬೇಕು,” ಎಂದು ಹೇಳಿದನು.</verse>
				<verse number="17">ತನ್ನ ಬಳಿಯಲ್ಲಿದ್ದ ಸಿಪಾಯಿಗಳಿಗೆ, “ನೀವು ಹಿಂದಿರುಗಿ ಸರ್ವೇಶ್ವರನ ಈ ಯಾಜಕರನ್ನು ಕೊಲ್ಲಿರಿ; ದಾವೀದನು ಪಲಾಯನ ಆದದ್ದು ಗೊತ್ತಿದ್ದರೂ ನನಗೆ ತಿಳಿಸದೆ ಅವನಿಗೆ ಸಹಾಯಮಾಡಿದ್ದಾರೆ,” ಎಂದು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಸರ್ವೇಶ್ವರನ ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸುಮಾಡಲಿಲ್ಲ.</verse>
				<verse number="18">ಆದುದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, “ನೀನು ಹೋಗಿ ಅವರನ್ನು ಕೊಲ್ಲು,” ಎಂದು ಆಜ್ಞಾಪಿಸಿದನು. ಅವನು ನಾರುಮಡಿಯ ಏಫೋದನ್ನು ಧರಿಸಿಕೊಂಡಿದ್ದ ಎಂಬತ್ತೈದು ಮಂದಿ ಯಾಜಕರನ್ನು ಆ ದಿವಸ ಕೊಂದುಹಾಕಿದನು.</verse>
				<verse number="19">ಅನಂತರ ಅವನು ಯಾಜಕರ ಪಟ್ಟಣವಾದ ನೋಬಕ್ಕೆ ಹೋಗಿ ಅಲ್ಲಿನ ಸ್ತ್ರೀಪುರುಷರನ್ನೂ ಶಿಶುಬಾಲಕರನ್ನೂ ದನಕುರಿಕತ್ತೆಗಳನ್ನೂ ಕತ್ತಿಯಿಂದ ಸಂಹರಿಸಿದನು.</verse>
				<verse number="20">ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಏಬ್ಯಾತಾರನೆಂಬವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದನು.</verse>
				<verse number="21">ಸೌಲನು ಸರ್ವೇಶ್ವರನ ಯಾಜಕರನ್ನು ಕೊಲ್ಲಿಸಿದ ಸಂಗತಿಯನ್ನು ಅವನಿಗೆ ತಿಳಿಸಿದನು.</verse>
				<verse number="22">ದಾವೀದನು, “ಎದೋಮ್ಯನಾದ ದೋಯೇಗನನ್ನು ನಾನು ಅಲ್ಲಿ ಕಂಡಾಗಲೇ ಇವನು ಸೌಲನಿಗೆ ಹೇಗೂ ಈ ಸಂಗತಿಯನ್ನು ತಿಳಿಸುವನೆಂದು ನೆನೆಸಿಕೊಂಡೆ; ನಿನ್ನ ಸಂಬಂಧಿಕರ ವಧೆಗೆ ನಾನೇ ಕಾರಣನಾದೆನಲ್ಲಾ!</verse>
				<verse number="23">ನೀನಾದರೋ ಹೆದರದೆ ನನ್ನ ಸಂಗಡ ಇರು; ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವನು ನಿನ್ನ ಪ್ರಾಣವನ್ನೂ ತೆಗೆಯಬೇಕೆಂದಿರುತ್ತಾನೆ. ನೀನು ನನ್ನ ಜೊತೆಯಲ್ಲಿ ಇರುವುದಾದರೆ ಸುರಕ್ಷಿತನಾಗಿರುವೆ,” ಎಂದನು.</verse>
			</chapter>
			<chapter number="23">
				<verse number="1">ಫಿಲಿಷ್ಟಿಯರು ಕೆಯೀಲಾಕ್ಕೆ ಮುತ್ತಿಗೆ ಹಾಕಿ ಅಲ್ಲಿನ ಕಣಗಳನ್ನು ಸೂರೆಮಾಡುತ್ತಿದ್ದಾರೆಂದು ದಾವೀದನಿಗೆ ತಿಳಿಸಲಾಯಿತು.</verse>
				<verse number="2">ಅವನು, “ನಾನು ಹೋಗಿ ಆ ಫಿಲಿಷ್ಟಿಯರ ಮೇಲೆ ದಾಳಿಮಾಡಲೆ?” ಎಂದು ಸರ್ವೇಶ್ವರನನ್ನು ಕೇಳಿದನು. ಸರ್ವೇಶ್ವರ ಅವನಿಗೆ, “ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಕೆಯೀಲಾ ಊರನ್ನು ರಕ್ಷಿಸು,” ಎಂದು ಉತ್ತರಕೊಟ್ಟರು.</verse>
				<verse number="3">ಆದರೆ ದಾವೀದನ ಸೈನಿಕರು ಅವನಿಗೆ, “ನಮಗೆ ಯೆಹೂದ ನಾಡಿನಲ್ಲಿಯೇ ಇಷ್ಟು ಆಪತ್ತುಗಳು ಇರುವಲ್ಲಿ ಫಿಲಿಷ್ಟಿಯ ಸೈನ್ಯದೊಡನೆ ಯುದ್ಧಮಾಡುವುದಕ್ಕಾಗಿ ಕೆಯೀಲಾಕ್ಕೆ ಹೋದರೆ ಅಲ್ಲಿ ಎಷ್ಟೋ ಅಧಿಕವಾದ ಗಂಡಾಂತರಗಳು ಕಾದಿರಬಹುದಲ್ಲವೆ?” ಎಂದರು.</verse>
				<verse number="4">ಆದುದರಿಂದ ಮತ್ತೆ ಸರ್ವೇಶ್ವರನನ್ನು ಕೇಳಿದನು. ಅವರು, “ನೀನೆದ್ದು ಕೆಯೀಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು,” ಎಂದು ಉತ್ತರಕೊಟ್ಟರು.</verse>
				<verse number="5">ಆಗ ದಾವೀದನು ತನ್ನ ಜನರೊಡನೆ ಕೆಯೀಲಾಕ್ಕೆ ಹೋಗಿ ಫಿಲಿಷ್ಟಿಯರೊಡನೆ ಯುದ್ಧಮಾಡಿದನು. ಅವರನ್ನು ಪೂರ್ಣವಾಗಿ ಸೋಲಿಸಿ, ಅವರ ಪಶುಗಳನ್ನು ತೆಗೆದುಕೊಂಡು ಕೆಯೀಲಾದವರನ್ನು ಕಾಪಾಡಿದನು.</verse>
				<verse number="6">ದಾವೀದನ ಬಳಿಗೆ ಓಡಿಬಂದಿದ್ದ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯೀಲಕ್ಕೆ ಬರುವಾಗ ‘ಏಫೋದ’ನ್ನು ತಂದಿದ್ದನು.</verse>
				<verse number="7">ದಾವೀದನು ಕೆಯೀಲಾದಲ್ಲಿದ್ದಾನೆಂಬ ಸಮಾಚಾರ ಸೌಲನಿಗೆ ಮುಟ್ಟಿತು. ಆಗ ಅವನು, “ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದ್ದಾರೆ. ಅವನು ಅಗುಳಿಕದಗಳಿಂದ ಭದ್ರವಾಗಿರುವ ಕೋಟೆಯನ್ನು ಪ್ರವೇಶಿಸಿದ್ದಾನಲ್ಲವೆ? ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು,” ಎಂದುಕೊಂಡನು.</verse>
				<verse number="8">ಕೆಯೀಲಾದಲ್ಲಿದ್ದ ದಾವೀದನನ್ನೂ ಅವನ ಜನರನ್ನೂ ಹಿಡಿಯುವುದಕ್ಕಾಗಿ ಸೈನ್ಯವನ್ನು ಕೂಡಿಸಿದನು.</verse>
				<verse number="9">ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆಂದು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದು ಹೇಳಿ ತರಿಸಿ,</verse>
				<verse number="10">“ಇಸ್ರಯೇಲ್ ದೇವರಾದ ಸರ್ವೇಶ್ವರಾ, ಸೌಲನು ಕೆಯೀಲಾಕ್ಕೆ ಬಂದು ನನ್ನ ನಿಮಿತ್ತ ಪಟ್ಟಣವನ್ನು ಹಾಳುಮಾಡಬೇಕೆಂದಿದ್ದಾನೆ ಎಂದು ನಿಮ್ಮ ದಾಸನಾದ ನನಗೆ ಸುದ್ದಿಬಂದಿದೆ.</verse>
				<verse number="11">ನಾನು ಕೇಳಿದ ಸುದ್ದಿಯಂತೆ ಅವನು ನಿಜವಾಗಿ ಬರುವನೇ? ಕೆಯೀಲಾ ಪುರಜನರು ನನ್ನನ್ನು ಅವನ ಕೈಗೆ ಒಪ್ಪಿಸುವರೇ? ಇಸ್ರಯೇಲ ದೇವರಾದ ಸರ್ವೇಶ್ವರಾ, ಈ ವಿಷಯದಲ್ಲಿ ಉತ್ತರ ದಯಪಾಲಿಸಿ,” ಎಂದು ಪ್ರಾರ್ಥಿಸಿದನು. ಸೌಲನು ಬರುವನೆಂಬುದಾಗಿ ಸರ್ವೇಶ್ವರನಿಂದ ಉತ್ತರ ಸಿಕ್ಕಿತು.</verse>
				<verse number="12">ದಾವೀದನು ಪುನಃ ಸರ್ವೇಶ್ವರನನ್ನು, ಕೆಯೀಲಾದವರು ನನ್ನನ್ನೂ ನನ್ನ ಜನರನ್ನೂ ಸೌಲನ ಕೈಗೆ ಒಪ್ಪಿಸುವರೇ?” ಎಂದು ಕೇಳಿದಾಗ ಅವರು, “ಒಪ್ಪಿಸಿಕೊಡುವರು,” ಎಂದು ಉತ್ತರಕೊಟ್ಟರು.</verse>
				<verse number="13">ಆಗ ದಾವೀದನು ತನ್ನ ಸಂಗಡ ಇದ್ದ ಆರುನೂರು ಜನರ ಸಹಿತವಾಗಿ ಕೆಯೀಲಾ ಊರನ್ನು ಬಿಟ್ಟು ಎಲ್ಲೆಲ್ಲಿಯೋ ಅಲೆದಾಡಿದನು. ದಾವೀದನು ಕೆಯೀಲಾದಿಂದ ತಪ್ಪಿಸಿಕೊಂಡನು ಎಂದು ಸೌಲನಿಗೆ ಗೊತ್ತಾಗಲು ಅವನು ಪ್ರಯಾಣವನ್ನು ನಿಲ್ಲಿಸಿಬಿಟ್ಟನು.</verse>
				<verse number="14">ಅನಂತರ ದಾವೀದನು ಮರುಭೂಮಿಯಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದನು. ಕಡೆಗೆ ಜೀಫ್ ಮರುಭೂಮಿಯ ಪರ್ವತಪ್ರಾಂತ್ಯಕ್ಕೆ ಬಂದು ಅಲ್ಲಿ ವಾಸಮಾಡಿದನು. ದಿನಂಪ್ರತಿ ಹುಡುಕುತ್ತಿದ್ದರೂ ದೇವರು ಆತನನ್ನು ಸೌಲನ ಕೈಗೆ ಒಪ್ಪಿಸಲಿಲ್ಲ.</verse>
				<verse number="15">ಸೌಲನು ತನ್ನನ್ನು ಕೊಲ್ಲಲು ಹೊರಟಿದ್ದಾನೆಂದು ದಾವೀದನು ತಿಳಿದು ಜೀಫ್ ಮರುಭೂಮಿಯ ಹೋರೆಷದಲ್ಲಿ ಅಡಗಿಕೊಂಡಿದ್ದನು.</verse>
				<verse number="16">ಆಗ ಸೌಲನ ಮಗ ಯೋನಾತಾನನು ಅಲ್ಲಿಗೆ ಹೋಗಿ,</verse>
				<verse number="17">ದಾವೀದನಿಗೆ, “ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವುದಿಲ್ಲ; ನೀನು ಇಸ್ರಯೇಲರ ಅರಸನಾಗುವೆ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವುದೆಂದು ನನ್ನ ತಂದೆ ಸೌಲ ತಿಳಿದುಕೊಂಡಿದ್ದಾರೆ.” ಎಂದು ಹೇಳಿ ದೇವರ ಹೆಸರಿನಲ್ಲಿ ಧೈರ್ಯತುಂಬಿದನು.</verse>
				<verse number="18">ಅವರಿಬ್ಬರೂ ಸರ್ವೇಶ್ವರನ ಸನ್ನಿಧಿಯಲ್ಲಿ ಒಪ್ಪಂದಮಾಡಿಕೊಂಡರು. ತರುವಾಯ ಯೋನಾತಾನನು ತನ್ನ ಮನೆಗೆ ಹೋದನು. ದಾವೀದನು ಹೋರೆಷದಲ್ಲಿಯೇ ಇದ್ದನು.</verse>
				<verse number="19">ಜೀಫ್ಯರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು, “ಒಡೆಯಾ, ಆಲಿಸಬೇಕು; ದಾವೀದನು ನಮ್ಮ ಪ್ರಾಂತ್ಯಕ್ಕೆ ಸೇರಿದ ಹೋರೆಷದ ಗಿರಿಗಳಲ್ಲಿ ಅಂದರೆ ಮರುಭೂಮಿಯ ದಕ್ಷಿಣದಲ್ಲಿ ಇರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ.</verse>
				<verse number="20">ಅರಸರು ಕುತೂಹಲದಂತೆ ನಮ್ಮ ಜೊತೆಯಲ್ಲಿ ಬರೋಣವಾಗಲಿ; ಅವನನ್ನು ತಮ್ಮ ಕೈಗೆ ಒಪ್ಪಿಸುವ ಕೆಲಸ ನಮ್ಮದು,” ಎಂದು ಹೇಳಿದರು.</verse>
				<verse number="21">ಆಗ ಸೌಲನು ಅವರಿಗೆ, “ನೀವು ನನ್ನ ಮೇಲೆ ಕನಿಕರಪಟ್ಟದ್ದರಿಂದ ಸರ್ವೇಶ್ವರನ ಆಶೀರ್ವಾದ ನಿಮ್ಮ ಮೇಲಿರಲಿ!</verse>
				<verse number="22">ನೀವು ದಯವಿಟ್ಟು ಹೋಗಿ ಅವನು ತಿರುಗಾಡುವ ಸ್ಥಳವನ್ನೂ ಅಲ್ಲಿ ಅವನ ಗುರುತು ಕಂಡಿರುವವರನ್ನೂ ಸೂಕ್ಷ್ಮವಾಗಿ ವಿಚಾರಿಸಿ ಗೊತ್ತುಮಾಡಿಕೊಳ್ಳಿ. ಅವನು ಬಹಳ ಯುಕ್ತಿವಂತನೆಂದು ಕೇಳಿದ್ದೇನೆ.</verse>
				<verse number="23">ಆದ್ದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಟ್ಟಾದ ಸ್ಥಳಗಳನ್ನು ಗೊತ್ತುಮಾಡಿಕೊಂಡು ಖಚಿತವಾದ ವರ್ತಮಾನವನ್ನು ನನಗೆ ಮುಟ್ಟಿಸಿರಿ. ನಾನು ನಿಮ್ಮ ಸಂಗಡ ಬರುವೆನು. ಅವನು ನಾಡಿನಲ್ಲಿ ಇರುವುದಾದರೆ ಯೆಹೂದ ಪ್ರಜೆಗಳ ಮಧ್ಯದಲ್ಲೆಲ್ಲಾ ಹುಡುಕಿ ಅವನನ್ನು ಹಿಡಿಯುವೆನು,” ಎಂದನು.</verse>
				<verse number="24">ಅವರು ಹೊರಟು ಸೌಲನ ಮುಂದಾಗಿ ಜೀಫಿಗೆ ಬಂದರು. ದಾವೀದನೂ ಅವನ ಜನರೂ ಮಾವೋನ್ ಮರುಭೂಮಿಯ ದಕ್ಷಿಣದಿಕ್ಕಿನಲ್ಲಿ ಇರುವ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಇದ್ದರು.</verse>
				<verse number="25">ಸೌಲನು ತನ್ನ ಜನರೊಡನೆ ದಾವೀದನನ್ನು ಹಿಡಿಯುವುದಕ್ಕೆ ಬಂದನು. ಈ ಸಮಾಚಾರ ದಾವೀದನಿಗೆ ಸಿಕ್ಕಿತು. ಅವನು ಮಾವೋನಿನಲ್ಲಿ ಇರುವ ಒಂದು ಕಡಿದಾದ ಬೆಟ್ಟಕ್ಕೆ ಹೋಗಿ ಅಡಗಿಕೊಂಡನು. ಸೌಲನು ಇದನ್ನು ಕೇಳಿ ಮಾವೋನ್ ಮರುಭೂಮಿಗೆ ಬಂದು ಆ ಬೆಟ್ಟದ ಒಂದು ಕಡೆಯಲ್ಲಿ ಹೋಗುತ್ತಿದ್ದನು.</verse>
				<verse number="26">ಅದರ ಇನ್ನೊಂದು ಕಡೆಯಲ್ಲಿ ದಾವೀದನೂ ಅವನ ಜನರೂ ಇದ್ದರು. ದಾವೀದನೂ ಅವನ ಜನರೂ ತಪ್ಪಿಸಿಕೊಳ್ಳುವುದಕ್ಕೆ ತ್ವರೆಪಡುತ್ತಿದ್ದರು. ಅಷ್ಟರಲ್ಲಿ ಸೌಲನೂ ಅವನ ಜನರೂ ಬಂದು ಅವರನ್ನು ಸುತ್ತಿ ಹಿಡಿಯುವುದಕ್ಕಿದ್ದರು.</verse>
				<verse number="27">ಅದೇ ವೇಳೆಗೆ ದೂತನೊಬ್ಬನು ಸೌಲನ ಬಳಿಗೆ ಬಂದು, “ಬೇಗ ಬನ್ನಿ, ಫಿಲಿಷ್ಟಿಯರು ನಾಡಿನೊಳಕ್ಕೆ ನುಗ್ಗಿದ್ದಾರೆ,” ಎಂದು ತಿಳಿಸಿದನು.</verse>
				<verse number="28">ಆದ್ದರಿಂದ ಅವನು ದಾವೀದನನ್ನು ಹಿಡಿಯುವ ಕೆಲಸವನ್ನು ಬಿಟ್ಟು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೊರಟನು. ಈ ಕಾರಣ ಆ ಬೆಟ್ಟಕ್ಕೆ’ಅಡ್ಡಬೆಟ್ಟ’ ಎಂದು ಹೆಸರಾಯಿತು.</verse>
				<verse number="29">ದಾವೀದನು ಅಲ್ಲಿಂದ ಗುಡ್ಡ ಹತ್ತಿಹೋಗಿ ಏಂಗೆದಿಯ ಗಿರಿಗಳಲ್ಲಿ ವಾಸಿಸಿದನು.</verse>
			</chapter>
			<chapter number="24">
				<verse number="1">ಸೌಲನು ಫಿಲಿಷ್ಟಿಯರನ್ನು ಓಡಿಸಿ ಹಿಂದಿರುಗಿದಾಗ ದಾವೀದನು ಏಂಗೆದಿಯ ಮರುಭೂಮಿಯಲ್ಲಿದ್ದಾನೆಂದು ಅವನಿಗೆ ತಿಳಿದುಬಂದಿತು.</verse>
				<verse number="2">ಆಗ ಅವನು ಇಸ್ರಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಕಾಡುಗುರಿಬಂಡೆಗಳಲ್ಲಿದ್ದ ದಾವೀದನನ್ನೂ ಅವನ ಜನರನ್ನೂ ಹುಡುಕುವುದಕ್ಕಾಗಿ ಹೊರಟನು.</verse>
				<verse number="3">ಮಾರ್ಗದಲ್ಲಿ ಕುರಿಹಟ್ಟಿಗಳ ಬಳಿಯಲ್ಲಿ ಒಂದು ಗವಿಯನ್ನು ಕಂಡು ಶೌಚಕ್ಕಾಗಿ ಅದರೊಳಗೆ ಪ್ರವೇಶಿಸಿದನು. ದಾವೀದನೂ ಅವನ ಜನರೂ ಅದೇ ಗವಿಯ ಹಿಂಗಡೆಯಲ್ಲಿ ಅಡಗಿಕೊಂಡಿದ್ದರು.</verse>
				<verse number="4">ಜನರು ದಾವೀದನಿಗೆ, “’ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಆಗ ನೀನು ಅವನನ್ನು ನಿನ್ನ ಇಷ್ಟಾನುಸಾರ ನಡೆಸಬಹುದು,’ ಎಂದು ಸರ್ವೇಶ್ವರ ನಿನಗೆ ಹೇಳಿದ ಮಾತು ನೆರವೇರುವ ಸುದಿನವಿದು,” ಎಂದರು. ಅವನೆದ್ದು ಮೆಲ್ಲಗೆ ಹೋಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.</verse>
				<verse number="5">ಅನಂತರದಲ್ಲೇ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿದ್ದಕ್ಕಾಗಿ ಅವನ ಮನಸ್ಸಾಕ್ಷಿ ಅವನನ್ನು ಹಂಗಿಸತೊಡಗಿತು..</verse>
				<verse number="6">ಅವನು ತನ್ನ ಜನರಿಗೆ, “ಆತ ಸರ್ವೇಶ್ವರನಿಂದ ಅಭಿಷಿಕ್ತನು ಹಾಗು ಆತನು ನನ್ನ ಒಡೆಯನು ಆಗಿದ್ದಾರೆ; ನಾನು ನಿಮ್ಮ ಮಾತು ಕೇಳಿ ಸರ್ವೇಶ್ವರನ ಅಭಿಷಿಕ್ತನ ವಿರೋಧವಾಗಿ ಕೈಯೆತ್ತದಂತೆ ಆ ಸರ್ವೇಶ್ವರನೇ ನನಗೆ ಅಡ್ಡಿಮಾಡಲಿ,” ಎಂದನು.</verse>
				<verse number="7">ಹೀಗೆ ಸೌಲನಿಗೆ ವಿರುದ್ಧ ತನ್ನ ಜನರು ದಂಗೆಯೇಳದಂತೆ ತಡೆದನು.</verse>
				<verse number="8">ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದಮೇಲೆ ದಾವೀದನೂ ಹೊರಗೆ ಬಂದು, “ಅರಸರೇ, ನನ್ನ ಒಡೆಯರೇ,” ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಿದನು. ಆಗ ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿ,</verse>
				<verse number="9">“ನಿಮಗೆ ನಾನು ಕೇಡುಮಾಡಬೇಕೆಂದಿದ್ದೇನೆಂದು ಹೇಳುವವರ ಮಾತಿಗೆ ನೀವು ಕಿವಿಗೊಡಬೇಡಿ.</verse>
				<verse number="10">ಇಂದು ಈ ಗವಿಯಲ್ಲಿ ಸರ್ವೇಶ್ವರ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೆಂಬುದು ಈಗ ನಿಮಗೆ ಗೊತ್ತಾಗಿರಬೇಕು. ನಿಮ್ಮನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು. ಆದರೆ ನಾನು ಅವರಿಗೆ, ‘ಸರ್ವೇಶ್ವರನಿಂದ ಅಭಿಷಿಕ್ತರಾದ ನನ್ನ ಒಡೆಯರ ಮೇಲೆ ಕೈಯೆತ್ತುವುದಿಲ್ಲ,’ ಎಂದು ಹೇಳಿ ನಿಮ್ಮನ್ನು ಉಳಿಸಿದೆ.</verse>
				<verse number="11">ನೀವು ನನ್ನ ತಂದೆ; ಇಗೋ ನೋಡಿ! ನನ್ನ ಕೈಯಲ್ಲಿ ನಿಮ್ಮ ನಿಲುವಂಗಿಯ ತುಂಡು ಇದೆ; ನಾನು ನಿಮ್ಮನ್ನು ಕೊಲ್ಲದೆ ನಿಮ್ಮ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡೆನಷ್ಟೆ. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ; ನಾನು ನಿಮಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೊಳ್ಳಿ; ಆದರೂ ನೀವು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿರಲ್ಲವೆ?</verse>
				<verse number="12">ಸರ್ವೇಶ್ವರನೇ ನಮ್ಮ ಉಭಯರ ವ್ಯಾಜ್ಯವನ್ನು ತೀರಿಸಲಿ; ಅವರೇ ನನಗಾಗಿ ನಿಮಗೆ ಮುಯ್ಯಿಸಲ್ಲಿಸಲಿ; ನಾನಂತೂ ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.</verse>
				<verse number="13">ಇಸ್ರಯೇಲರಲ್ಲಿ ‘ಕೆಟ್ಟವರಿಂದಲೇ ಕೇಡು’ ಎಂಬುದಾಗಿ ಹಿರಿಯರಿಂದ ಬಂದ ಗಾದೆಯುಂಟು. ನಾನು ನಿಮಗೆ ವಿರೋಧವಾಗಿ ಕೈಯೆತ್ತುವುದಿಲ್ಲ.</verse>
				<verse number="14">ಇಸ್ರಯೇಲರ ಅರಸರೇ, ಯಾರನ್ನು ಹಿಂದಟ್ಟಿ ಹೊರಟಿದ್ದೀರಿ? ಯಾರನ್ನು ಹಿಡಿಯಬೇಕೆಂದಿರುತ್ತೀರಿ? ಸತ್ತ ನಾಯಿಯನ್ನೇ? ಒಂದು ಬಡ ಸೊಳ್ಳೆಯನ್ನೇ?</verse>
				<verse number="15">ಸರ್ವೇಶ್ವರ ನ್ಯಾಯಾಧಿಪತಿಯಾಗಿ ನಮ್ಮಿಬ್ಬರ ವ್ಯಾಜ್ಯವನ್ನು ತೀರಿಸಲಿ; ಅವರೇ ನೋಡಿ ನನ್ನ ಪರವಾಗಿ ವಾದಿಸಿ ನನ್ನನ್ನು ನಿಮ್ಮ ಕೈಯಿಂದ ತಪ್ಪಿಸಲಿ,” ಎಂದು ಹೇಳಿದನು.</verse>
				<verse number="16">ದಾವೀದನ ಮಾತುಗಳು ಮುಗಿದನಂತರ ಸೌಲನು, “ದಾವೀದನೇ, ನನ್ನ ಮಗನೇ, ಇದು ನಿಜವಾಗಿಯೂ ನಿನ್ನ ಸ್ವರವೇ?” ಎಂದು ಗಟ್ಟಿಯಾಗಿ ಅತ್ತನು.</verse>
				<verse number="17">ಇದಲ್ಲದೆ ಅವನು ದಾವೀದನಿಗೆ, “ನೀನು ನನಗಿಂತ ನೀತಿವಂತ; ನಾನು ನಿನಗೆ ಕೇಡುಮಾಡಿದರೂ ನೀನು ನನಗೆ ಒಳ್ಳೆಯದನ್ನೇ ಮಾಡಿದೆ.</verse>
				<verse number="18">ಸರ್ವೇಶ್ವರ ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ. ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬುದು ಈ ದಿನ ಖಚಿತವಾಯಿತು.</verse>
				<verse number="19">ಯಾವನಾದರೂ ತನ್ನ ಕೈಗೆ ಸಿಕ್ಕಿದ ವೈರಿಯನ್ನು ಸುಕ್ಷೇಮದಿಂದ ಕಳುಹಿಸಿಬಿಡುತ್ತಾನೆಯೇ? ನೀನು ಈ ದಿನ ನನಗೆ ಮಾಡಿದ ಉಪಕಾರಕ್ಕಾಗಿ ಸರ್ವೇಶ್ವರ ನಿನಗೆ ಪ್ರತ್ಯುಪಕಾರಮಾಡಲಿ.</verse>
				<verse number="20">ಕೇಳು; ನೀನು ಹೇಗೂ ಅರಸನಾಗುವೆಯೆಂದೂ ಇಸ್ರಯೇಲ್ ರಾಜ್ಯ ನಿನ್ನ ಆಳ್ವಿಕೆಯಲ್ಲಿ ಸ್ಥಿರವಾಗುವುದೆಂದೂ ಬಲ್ಲೆ.</verse>
				<verse number="21">ಹೀಗಿರುವುದರಿಂದ ನೀನು ನನ್ನ ಸಂತಾನವನ್ನು ನಿರ್ಮೂಲಮಾಡುವುದು ಇಲ್ಲವೆಂದೂ ನಮ್ಮ ಕುಲದಿಂದ ನನ್ನ ಹೆಸರನ್ನು ತೆಗೆದು ಹಾಕುವುದಿಲ್ಲವೆಂದೂ ಸರ್ವೇಶ್ವರನ ಹೆಸರಿನಲ್ಲಿ ಪ್ರಮಾಣ ಮಾಡು,” ಎಂದು ಬೇಡಿಕೊಂಡನು. ಹಾಗೆಯೇ ದಾವೀದನು ಪ್ರಮಾಣ ಮಾಡಿದನು.</verse>
				<verse number="22">ಅನಂತರ ಸೌಲನು ತನ್ನ ಮನೆಗೆ ಹೊರಟನು; ದಾವೀದನು ತನ್ನ ಜನರೊಡನೆ ಆಶ್ರಯಗಿರಿಗೆ ಮರಳಿದನು.</verse>
			</chapter>
			<chapter number="25">
				<verse number="1">ಸಮುವೇಲನು ಮರಣಹೊಂದಿದನು. ಇಸ್ರಯೇಲರೆಲ್ಲರೂ ಕೂಡಿಬಂದು ಅವನಿಗಾಗಿ ಸಂತಾಪಸೂಚಿಸುತ್ತಾ ಅವನ ಶವವನ್ನು ರಾಮಾದಲ್ಲಿದ್ದ ಅವನ ಮನೆಯ ಅಂಗಳದಲ್ಲೇ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.</verse>
				<verse number="2">ಕರ್ಮೆಲಿನಲ್ಲಿ ಸ್ವಂತ ಸೊತ್ತು ಪಡೆದಿದ್ದ ಒಬ್ಬ ಮನುಷ್ಯ ಮಾವೋನಿನಲ್ಲಿ ವಾಸಿಸುತ್ತಿದ್ದನು. ಅವನ ಹೆಸರು ನಾಬಾಲ.</verse>
				<verse number="3">ಅವನ ಹೆಂಡತಿಯ ಹೆಸರು ಅಬೀಗೈಲ್. ಆಕೆ ಬಹು ಬುದ್ಧಿವಂತೆ ಹಾಗು ಸುಂದರಿ. ಕಾಲೇಬನ ವಂಶದವನಾದ ಆ ಮನುಷ್ಯನಾದರೊ ನಿಷ್ಠುರನು ಹಾಗು ದುಷ್ಕರ್ಮಿ. ಅವನು ಬಹು ಧನವಂತನೂ ಆಗಿದ್ದ. ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಆಡುಗಳೂ ಇದ್ದವು. ಅವನು ಒಮ್ಮೆ ಕರ್ಮೆಲಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುತ್ತಿದ್ದನು.</verse>
				<verse number="4">ನಾಬಾಲನು ಉಣ್ಣೆ ಕತ್ತರಿಸುತ್ತಿದ್ದಾನೆ ಎಂಬ ಸಮಾಚಾರ ಅಲ್ಲಿನ ಮರುಭೂಮಿಯಲ್ಲಿದ್ದ ದಾವೀದನಿಗೆ ಮುಟ್ಟಿತು.</verse>
				<verse number="5">ಅವನು ಹತ್ತುಮಂದಿ ಸೇವಕರನ್ನು ಕರೆದು ಅವರಿಗೆ, “ನೀವು ಕರ್ಮೆಲಿನಲ್ಲಿರುವ ನಮ್ಮ ಸಂಬಂಧಿಕನಾದ ನಾಬಾಲನ ಬಳಿಗೆ ಹೋಗಿ ಅವನ ಕ್ಷೇಮಸಮಾಚಾರವನ್ನು ವಿಚಾರಿಸಿರಿ.</verse>
				<verse number="6">ಅವನಿಗೆ ನನ್ನ ಹೆಸರಿನಲ್ಲಿ, ‘ನಿನಗೂ ನಿನ್ನ ಕುಟುಂಬಕ್ಕೂ ನಿನ್ನ ಸರ್ವಸಂಪತ್ತಿಗೂ ಶುಭವಾಗಲಿ!</verse>
				<verse number="7">ನಿನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ಕೆಲಸ ನಡೆಯುತ್ತಿದೆಯೆಂಬ ಸುದ್ದಿಯನ್ನು ಕೇಳಿದ್ದೇನೆ. ನಿನ್ನ ಕುರುಬರು ನಮ್ಮೊಡನೆ ಕರ್ಮೆಲಿನಲ್ಲಿದ್ದ ಕಾಲವೆಲ್ಲಾ ನಾವು ಅವರನ್ನು ತೊಂದರೆಪಡಿಸಲಿಲ್ಲ; ಅವರಿಗೇನೂ ನಷ್ಟಮಾಡಲಿಲ್ಲ.</verse>
				<verse number="8">ನಿನ್ನ ಆಳುಗ಼ಳನ್ನೇ ಕೇಳು, ಅವರೇ ಹೇಳುವರು. ಹೀಗಿರುವುದರಿಂದ ಶುಭಕಾಲದಲ್ಲಿ ನಿನ್ನ ಬಳಿಗೆ ಬಂದಿರುವ ನನ್ನ ಸೇವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಲಿ. ಕೃಪೆಮಾಡಿ ನಿನ್ನ ಸೇವಕರಿಗೂ ಮಗನಾದ ದಾವೀದನಿಗೂ ನಿನಗಿರುವುದರಲ್ಲಿ ಸಾಧ್ಯವಾದುದ್ದನ್ನು ಕೊಡು,’ ಎಂದು ಅವನಿಗೆ ಹೇಳಿರಿ,” ಎಂದು ಅವರನ್ನು ಕಳುಹಿಸಿದನು.</verse>
				<verse number="9">ದಾವೀದನ ಸೇವಕರು ಹೋಗಿ ಅವನ ಹೆಸರಿನಲ್ಲಿ ಈ ಮಾತುಗಳನ್ನೆಲ್ಲಾ ನಾಬಾಲನಿಗೆ ತಿಳಿಸಿದರು. ಅಲ್ಲೇ ಉತ್ತರಕ್ಕಾಗಿ ಕಾಯುತ್ತಿದ್ದರು.</verse>
				<verse number="10">ನಾಬಾಲನು ಅವರಿಗೆ, “ದಾವೀದನಾರು? ಜೆಸ್ಸೆಯನ ಮಗನಾರು? ಯಜಮಾನರನ್ನು ಬಿಟ್ಟು ಓಡಿಹೋದ ಗುಲಾಮರು ಈಗಿನ ಕಾಲದಲ್ಲಿ ಎಷ್ಟುಮಂದಿಯಿಲ್ಲ.</verse>
				<verse number="11">ಉಣ್ಣೆ ಕತ್ತರಿಸುವವರಿಗಾಗಿ ನಾನು ಸಿದ್ಧಮಾಡಿಸಿದ ಮಾಂಸವನ್ನೂ ಆಹಾರಪಾನಗಳನ್ನೂ ಎತ್ತಿ ಎಲ್ಲಿಂದಲೋ ಬಂದವರಿಗೆ ಕೊಡಲಾಗದು,” ಎಂದು ಉತ್ತರಕೊಟ್ಟನು.</verse>
				<verse number="12">ಆ ಸೇವಕರು ಹಿಂದಿರುಗಿ ತಮ್ಮ ದಾರಿಹಿಡಿದು ದಾವೀದನ ಬಳಿಗೆ ಬಂದು ಅವನಿಗೆ ಎಲ್ಲವನ್ನು ತಿಳಿಸಿದರು.</verse>
				<verse number="13">ಆಗ ದಾವೀದನು ತನ್ನ ಜನರಿಗೆ, “ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿ,” ಎಂದು ಆಜ್ಞಾಪಿಸಿದನು; ಅವರೆಲ್ಲರೂ ಕಟ್ಟಿಕೊಂಡರು. ದಾವೀದನೂ ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರುಮಂದಿ ದಾವೀದನ ಜೊತೆಯಲ್ಲಿ ಹೋದರು; ಇನ್ನೂರುಮಂದಿ ಸಾಮಾಗ್ರಿಗಳನ್ನು ಕಾಯುತ್ತಾ ಅಲ್ಲೇ ಇದ್ದರು.</verse>
				<verse number="14">ನಾಬಾಲನ ಸೇವಕರಲ್ಲೊಬ್ಬನು ಅವನ ಹೆಂಡತಿಯಾದ ಅಬೀಗೈಲಳಿಗೆ, “ಮರುಭೂಮಿಯಲ್ಲಿರುವ ದಾವೀದನು ನಮ್ಮ ದಣಿಯ ಕ್ಷೇಮ ವಿಚಾರಕ್ಕಾಗಿ ದೂತರನ್ನು ಕಳುಹಿಸಿದ್ದನು. ದಣಿಯವರು ಬಂದವರನ್ನು ಚೆನ್ನಾಗಿ ಬೈದು ಕಳಿಸಿದರು.</verse>
				<verse number="15">ಆ ಜನರು ನಮಗೆ ಬಹಳ ಉಪಕಾರ ಮಾಡಿದವರು; ನಾವು ಅವರೊಡನೆ ಅಡವಿಯಲ್ಲಿದ್ದ ಕಾಲವೆಲ್ಲಾ ಏನೂ ತೊಂದರೆಪಡಲಿಲ್ಲ, ನಷ್ಟಹೊಂದಲಿಲ್ಲ.</verse>
				<verse number="16">ನಾವು ಕುರಿಗಳನ್ನು ಮೇಯಿಸುವವರಾಗಿ ಅವರೊಡನಿದ್ದಾಗ ಅವರು ಹಗಲೂ ಇರುಳೂ ನಮಗೆ ಕಾವಲುಗೋಡೆಯಂತಿದ್ದರು.</verse>
				<verse number="17">ಈಗ ಮಾಡಬೇಕಾದುದ್ದನ್ನು ನೀವೇ ಆಲೋಚಿಸಿ ತೀರ್ಮಾನಿಸಿ. ನಮ್ಮ ಯಜಮಾನರಿಗೂ ಅವರ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ; ಮಂದಮತಿಯಾದ ಅವರೊಡನೆ ಮಾತಾಡುವುದು ಅಸಾಧ್ಯ,” ಎಂದು ಹೇಳಿದನು.</verse>
				<verse number="18">ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷೀ ಗೊಂಚಲುಗಳು, ಅಂಜೂರ ಹಣ್ಣುಗಳ ಇನ್ನೂರು ಉಂಡೆಗಳು, ಇವುಗಳನ್ನೆಲ್ಲ ಕತ್ತೆಗಳ ಮೇಲೆ ಹೇರಿಸಿದಳು.</verse>
				<verse number="19">ಅನಂತರ ತನ್ನ ಸೇವಕರಿಗೆ, “ನೀವು ಮುಂದೆ ನಡೆಯಿರಿ, ನಾನು ಹಿಂದೆ ಬರುತ್ತೇನೆ,” ಎಂದು ಹೇಳಿ ಅವರನ್ನು ಕಳುಹಿಸಿದಳು. ಗಂಡನಾದ ನಾಬಾಲನಿಗೆ ಏನೂ ತಿಳಿಸಲಿಲ್ಲ.</verse>
				<verse number="20">ಆಕೆ ಕತ್ತೆಯ ಮೇಲೆ ಕೂತು ಗುಡ್ಡದ ಮರೆಯಲ್ಲಿ ಹೋಗುತ್ತಿರುವಾಗ ದಾವೀದನೂ ಅವನ ಜನರೂ ಆ ಕಡೆಯಿಂದ ಗುಡ್ಡ ಇಳಿದು ಬಂದರು. ಆಕೆ ಅವರನ್ನು ಎದುರುಗೊಂಡಳು.</verse>
				<verse number="21">ಅಷ್ಟರಲ್ಲಿ ದಾವೀದನು, “ನಾನು ಅಡವಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥ ಆಯಿತು. ಅವನು ಉಪಕಾರಕ್ಕೆ ಅಪಕಾರ ಮಾಡಿದ್ದಾನೆ.</verse>
				<verse number="22">ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ!” ಎಂದು ಪ್ರತಿಜ್ಞೆ ಮಾಡಿದ್ದನು.</verse>
				<verse number="23">ಅಬೀಗೈಲಳು ದಾವೀದನನ್ನು ಕಂಡ ಕೂಡಲೆ ಕತ್ತೆಯಿಂದಿಳಿದು ಅವನಿಗೆ ಸಾಷ್ಟಾಂಗ ನಮಸ್ಕರಿಸಿದಳು.</verse>
				<verse number="24">ಆಮೇಲೆ ಅವನ ಪಾದಗಳ ಮೇಲೆ ಬಿದ್ದು, “ಒಡೆಯಾ, ಅಪರಾಧವು ನನ್ನ ಮೇಲಿರಲಿ; ನಿಮ್ಮ ದಾಸಿಯಾದ ನಾನು ಮಾತಾಡುವುದಕ್ಕೆ ಅಪ್ಪಣೆಯಾಗಲಿ. ನನ್ನ ಮಾತನ್ನು ಆಲಿಸಬೇಕು;</verse>
				<verse number="25">ಒಡೆಯಾ, ಮಂದಮತಿಯಾದ ಆ ನಾಬಾಲನನ್ನು ತಾವು ಲಕ್ಷಿಸಬೇಡಿ. ಅವನ ಹೆಸರು ನಾಬಾಲ್; ಅದಕ್ಕೆ ತಕ್ಕಂತೆ ಮೂರ್ಖನೇ ಆಗಿರುತ್ತಾನೆ. ನಿಮ್ಮ ದಾಸಿಯಾದ ನಾನು, ತಾವು ಕಳುಹಿಸಿದ ಸೇವಕರನ್ನು ನೋಡಲಿಲ್ಲ.</verse>
				<verse number="26">ಒಡೆಯಾ, ತಾವು ಸ್ವಹಸ್ತದಿಂದ ಮುಯ್ಯಿತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಸರ್ವೇಶ್ವರ ತಮ್ಮನ್ನು ಕಾಪಾಡಿದ್ದಾರೆ. ಸರ್ವೇಶ್ವರನಾಣೆ, ನಿಮ್ಮ ಜೀವದಾಣೆ, ನಿಮ್ಮ ವಿರೋಧಿಗಳೂ ನಿಮಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ!</verse>
				<verse number="27">ನಿಮ್ಮ ದಾಸಿ ತಂದ ಈ ಕಾಣಿಕೆಯನ್ನು ಅಂಗೀಕರಿಸಿರಿ. ಅದು ತಮ್ಮ ಸೇವಕರಿಗೆ ಸಲ್ಲಲಿ.</verse>
				<verse number="28">ನಿಮ್ಮ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ; ಒಡೆಯಾ, ತಾವು ಸರ್ವೇಶ್ವರನ ಶತ್ರುಗಳೊಡನೆ ಯುದ್ಧಮಾಡುವುದರಿಂದ ಅವರು ನಿಮ್ಮ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವರು. ಆದುದರಿಂದ ನಿಮ್ಮ ಜೀವಮಾನದಲ್ಲೆಲ್ಲಾ ನಮ್ಮಲ್ಲಿ ಕೆಟ್ಟತನ ಕಾಣದಿರಲಿ;</verse>
				<verse number="29">ಯಾವನಾದರೂ ನನ್ನ ಒಡೆಯರಾದ ನಿಮ್ಮನ್ನು ಹಿಂಸಿಸಿ ಜೀವತೆಗೆಯಬೇಕೆಂದು ಇರುವಾಗ, ಆ ನಿಮ್ಮ ಜೀವ, ತಮ್ಮ ದೇವರಾದ ಸರ್ವೇಶ್ವರನ ರಕ್ಷಣೆಯಲ್ಲಿರುವ ಜೀವನಿಕ್ಷೇಪದಲ್ಲಿ ಸುಭದ್ರವಾಗಿರಲಿ; ಆದರೆ ನಿಮ್ಮ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದುಬಿಡಲಿ.</verse>
				<verse number="30">ಸರ್ವೇಶ್ವರ ನನ್ನ ಒಡೆಯರಾದ ನಿಮಗೆ ವಾಗ್ದಾನಮಾಡಿದ ಎಲ್ಲಾ ಸೌಭಾಗ್ಯವನ್ನು ದಯಪಾಲಿಸಿ, ನಿಮ್ಮನ್ನು ಇಸ್ರಯೇಲಿನ ಅರಸರನ್ನಾಗಿ ಮಾಡಲಿ.</verse>
				<verse number="31">ಆಗ ನಿರಪರಾಧಿಯ ರಕ್ತವನ್ನು ಸುರಿಸಿ ಸೇಡುತೀರಿಸಿಕೊಂಡದ್ದಕ್ಕಾಗಿ ವಿಷಾದ, ಪಶ್ಚಾತ್ತಾಪಗಳಿಗೆ ಕಾರಣವಿರುವುದಿಲ್ಲ. ಸರ್ವೇಶ್ವರ ನಿಮ್ಮನ್ನು ಮಹಾಪದವಿಗೆ ಏರಿಸುವಾಗ ನಿಮ್ಮ ದಾಸಿಯಾದ ನನ್ನನ್ನು ಮರೆತುಬಿಡಬೇಡಿ,” ಎಂದಳು.</verse>
				<verse number="32">ಆಗ ದಾವೀದನು ಅಬೀಗೈಲಳಿಗೆ, “ಈ ದಿನ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನಿನ್ನನ್ನು ಕಳುಹಿಸಿದ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!</verse>
				<verse number="33">ಸ್ವಹಸ್ತದಿಂದ ಸೇಡುತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ನನ್ನನ್ನು ತಡೆದ ನೀನೂ ನಿನ್ನ ಜಾಣ್ಮೆಯೂ ಸ್ತುತ್ಯರ್ಹವೇ ಸರಿ.</verse>
				<verse number="34">ನಿನಗೆ ಕೇಡುಮಾಡದಂತೆ ನನ್ನನ್ನು ತಡೆದ ಇಸ್ರಯೇಲ್ ದೇವರಾದ ಸರ್ವೇಶ್ವರನ ಆಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದಿದ್ದರೆ ಖಂಡಿತವಾಗಿ ನಾಳೆ ಬೆಳಗಾಗುವಷ್ಟರಲ್ಲಿ ನಾಬಾಲನವರಲ್ಲಿ ಒಬ್ಬ ಗಂಡಸಾದರೂ ಖಂಡಿತವಾಗಿ ಉಳಿಯುತ್ತಿರಲಿಲ್ಲ!” ಎಂದು ಹೇಳಿದನು.</verse>
				<verse number="35">ಆಕೆ ತಂದ ಪದಾರ್ಥಗಳನ್ನು ತೆಗೆದುಕೊಂಡು ಆಕೆಗೆ, “ಸಮಾಧಾನದಿಂದ ಮನೆಗೆ ಹೋಗು; ನಿನ್ನನ್ನು ಕಟಾಕ್ಷಿಸಿ, ನಿನ್ನ ವಿಜ್ಞಾಪನೆಯನ್ನು ಆಲಿಸಿದ್ದೇನೆ,” ಎಂದನು.</verse>
				<verse number="36">ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ, ಬಹಳವಾಗಿ ಕುಡಿದು, ಬಹು ಸಂಭ್ರಮದಿಂದಿದ್ದ ಕಾರಣ ಈಕೆ ಮರುದಿವಸದವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.</verse>
				<verse number="37">ಮರುದಿನ ಅಮಲಿಳಿದ ನಂತರ ಈಕೆ ಈ ಸಮಾಚಾರವನ್ನು ಅವನಿಗೆ ತಿಳಿಸಿದಳು. ಆಗ ಅವನ ಗುಂಡಿಗೆ ಒಡೆಯಿತು. ಅವನು ಕಲ್ಲಿನಂತಾದನು.</verse>
				<verse number="38">ಸರ್ವೇಶ್ವರ ವಿಧಿಸಿದ ದಂಡನೆಯ ನಿಮಿತ್ತ ಸುಮಾರು ಹತ್ತು ದಿನಗಳಾದ ನಂತರ ನಾಬಾಲನು ಸತ್ತುಹೋದನು.</verse>
				<verse number="39">ನಾಬಾಲನು ಸತ್ತನೆಂಬ ವರ್ತಮಾನವನ್ನು ದಾವೀದನು ಕೇಳಿದನು. “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿ ತೀರಿಸಿದಂಥ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನನ್ನು ಕೆಟ್ಟತನದಿಂದ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದ್ದಾರೆ,” ಎಂದನು. ಅನಂತರ ಅವನು, ಅಬೀಗೈಲಳು ತನಗೆ ಹೆಂಡತಿಯಾಗಬೇಕೆಂದು ದೂತರನ್ನು ಕಳುಹಿಸಿದನು.</verse>
				<verse number="40">ಅವರು ಕರ್ಮೆಲಿನಲ್ಲಿದ್ದ ಅಬೀಗೈಲಳ ಬಳಿಗೆ ಹೋಗಿ ಆಕೆಗೆ, “ದಾವೀದ ಅವರು ನಿನ್ನನ್ನು ತಮಗೆ ಹೆಂಡತಿಯಾಗುವುದಕ್ಕೆ ಕರೆದುಕೊಂಡು ಬರಬೇಕೆಂದು ನಮ್ಮನ್ನು ಕಳುಹಿಸಿದ್ದಾರೆ,” ಎಂದರು.</verse>
				<verse number="41">ಆಕೆ ಎದ್ದು ನಮಸ್ಕಾರ ಮಾಡಿ, ಮಾತಾಡಿಸಿದವನಿಗೆ, “ನಿನ್ನ ದಾಸಿಯಾದ ನಾನು ನನ್ನ ಒಡೆಯರ ಕೈಕೆಳಗಿರುವ ಸೇವಕರ ಪಾದ ತೊಳೆಯುವುದಕ್ಕೂ ಸಿದ್ಧಳಾಗಿದ್ದೇನೆ,” ಎಂದು ಉತ್ತರಕೊಟ್ಟಳು.</verse>
				<verse number="42">ಅಲ್ಲದೆ ಬೇಗನೆ ಒಂದು ಕತ್ತೆಯನ್ನು ಹತ್ತಿ ತನ್ನ ಐದುಮಂದಿ ದಾಸಿಯರ ಸಹಿತವಾಗಿ ದಾವೀದನ ಸೇವಕರ ಜೊತೆಯಲ್ಲೆ ಹೊರಟುಹೋಗಿ ಅವನ ಹೆಂಡತಿಯಾದಳು.</verse>
				<verse number="43">ದಾವೀದನು ಜೆಸ್ರೀಲಿನವಳಾದ ಅಹೀನೋವಮಳನ್ನು ಮದುವೆಮಾಡಿಕೊಂಡಿದ್ದನು. ಈಗ ಅಬೀಗೈಲಳೂ ಅವನ ಹೆಂಡತಿಯಾದಳು.</verse>
				<verse number="44">ಈ ಮಧ್ಯೆ ಸೌಲನು, ದಾವೀದನ ಹೆಂಡತಿಯಾಗಿದ್ದ ಮೀಕಲಳೆಂಬ ತನ್ನ ಮಗಳನ್ನು ಗಲ್ಲೀಮ್ ಊರಿನ ಲಯಿಷನ ಮಗನಾದ ಪಲ್ಟೀ ಎಂಬವನಿಗೆ ಮದುವೆ ಮಾಡಿಕೊಟ್ಟಿದ್ದನು.</verse>
			</chapter>
			<chapter number="26">
				<verse number="1">ಜೀಫ್ಯರಲ್ಲಿ ಕೆಲವರು ಗಿಬೆಯದಲ್ಲಿದ್ದ ಸೌಲನ ಬಳಿಗೆ ಬಂದು, “ದಾವೀದನು ಮರುಭೂಮಿಯ ಮೂಡಣ ದಿಕ್ಕಿನಲ್ಲಿರುವ ಹಕೀಲಾ ಬೆಟ್ಟದಲ್ಲಿ ಅಡಗಿಕೊಂಡಿದ್ದಾನೆ; ಇದು ನಿಮಗೆ ಗೊತ್ತೇ?’ ಎಂದರು.</verse>
				<verse number="2">ಆಗ ಸೌಲನು ಇಸ್ರಯೇಲರಲ್ಲಿ ಶ್ರೇಷ್ಠರಾದ ಮೂರು ಸಾವಿರಮಂದಿ ಸೈನಿಕರನ್ನು ಆರಿಸಿಕೊಂಡು ದಾವೀದನನ್ನು ಹುಡುಕುವುದಕ್ಕಾಗಿ ಜೀಫ್ ಮರುಭೂಮಿಗೆ ಹೋದನು.</verse>
				<verse number="3">ಅದರ ಪೂರ್ವದಿಕ್ಕಿನಲ್ಲಿ ದಾರಿಯ ಬಳಿಯಲ್ಲಿರುವ ಹಕೀಲಾ ಬೆಟ್ಟದಲ್ಲಿ ಪಾಳೆಯ ಮಾಡಿಕೊಂಡನು. ಸೌಲನು ತನ್ನನ್ನು ಹಿಡಿಯುವುದಕ್ಕಾಗಿ ಮರುಭೂಮಿಗೆ ಬಂದಿದ್ದಾನೆಂಬ ಸುದ್ದಿ ಅಲ್ಲಿಯೇ ಇದ್ದ ದಾವೀದನಿಗೆ ಮುಟ್ಟಿತು.</verse>
				<verse number="4">ಅವನು ಕೂಡಲೆ ಗೂಢಚಾರರನ್ನು ಕಳುಹಿಸಿ ಸೌಲನು ಇಳಿದುಕೊಂಡಿದ್ದ ಸ್ಥಳವನ್ನು ಖಚಿತಪಡಿಸಿಕೊಂಡನು.</verse>
				<verse number="5">ಅನಂತರ ತಾನಾಗಿಯೇ ಸೌಲನ ಪಾಳೆಯದ ಹತ್ತಿರಕ್ಕೆ ಹೋಗಿ, ಸೌಲನು ಹಾಗು ನೇರನ ಮಗನಾದ ಅವನ ಸೇನಾಪತಿ ಅಬ್ನೇರನು ಮಲಗಿದ್ದ ಸ್ಥಳಗಳನ್ನು ಕಂಡುಹಿಡಿದನು. ಸೌಲನು ಬಂಡಿಗಳನ್ನು ಬಿಡುವ ಸ್ಥಳ ಮಧ್ಯದಲ್ಲಿ ಮಲಗಿದ್ದನು. ಅವನ ಸುತ್ತಲೂ ಸೈನಿಕರು ಇದ್ದರು.</verse>
				<verse number="6">ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಹಾಗು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯನ್ನು ಉದ್ದೇಶಿಸಿ, “ನಿಮ್ಮಲ್ಲಿ ನನ್ನ ಸಂಗಡ ಸೌಲನ ಪಾಳೆಯಕ್ಕೆ ಯಾರು ಬರುವಿರಿ?” ಎಂದು ಕೇಳಿದನು. ಅದಕ್ಕೆ ಅಬೀಷೈಯು, “ನಾನು ಬರುತ್ತೇನೆ,” ಎಂದು ಉತ್ತರಕೊಟ್ಟನು.</verse>
				<verse number="7">ದಾವೀದನು ಮತ್ತು ಅಬೀಷೈಯು, ರಾತ್ರಿಯಲ್ಲಿ ಆ ಪಾಳೆಯಕ್ಕೆ ಹೋದಾಗ ಸೌಲನು ಬಂಡಿಗಳ ಗುಂಪಿನ ಮಧ್ಯೆ ಮಲಗಿಕೊಂಡು ನಿದ್ರೆಮಾಡುತ್ತಿದ್ದನು. ಅವನ ಭರ್ಜಿಯನ್ನು ಅವನ ತಲೆಯ ಹತ್ತಿರ ನೆಲಕ್ಕೆ ತಿವಿದು ನಿಲ್ಲಿಸಲಾಗಿತ್ತು. ಅಬ್ನೇರನೂ ಸೈನಿಕರೂ ಅವನ ಸುತ್ತಲೂ ಮಲಗಿದ್ದರು.</verse>
				<verse number="8">ಅಬೀಷೈಯು ದಾವೀದನಿಗೆ, “ದೇವರು ಈ ದಿನ ನಿನ್ನ ವೈರಿಯನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟಿದ್ದಾರೆ; ಅಪ್ಪಣೆಯಾಗಲಿ, ನಾನು ಭರ್ಜಿಯಿಂದ ಒಂದೇ ಪೆಟ್ಟಿನಲ್ಲಿ ಅವನನ್ನು ನೆಲಕ್ಕೆ ಕಚ್ಚಿಕೊಳ್ಳುವಂತೆ ತಿವಿಯುತ್ತೇನೆ. ಎರಡನೆಯ ಸಾರಿ ಹೊಡೆಯುವ ಅವಶ್ಯಕತೆ ಇರುವುದಿಲ್ಲ,” ಎಂದು ಹೇಳಿದನು.</verse>
				<verse number="9">ಆದರೆ ದಾವೀದನು, “ಅವನನ್ನು ಕೊಲ್ಲಬೇಡ; ಸರ್ವೇಶ್ವರನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನೂ ನಿರಪರಾಧಿ ಎಂದು ಎಣಿಸಲ್ಪಡನು,” ಎಂದನು.</verse>
				<verse number="10">ಇದಲ್ಲದೆ ದಾವೀದನು, “ಸರ್ವೇಶ್ವರನಾಣೆ, ಅವನು ಸರ್ವೇಶ್ವರನಿಂದಲೇ ಸಾಯುವನು; ಇಲ್ಲವೆ ಕಾಲತುಂಬಿ ಮರಣಹೊಂದುವನು; ಅಥವಾ ಯುದ್ಧದಲ್ಲಿ ಮಡಿಯುವನು.</verse>
				<verse number="11">ತಮ್ಮ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಸರ್ವೇಶ್ವರನೇ ನನ್ನನ್ನು ತಡೆಯಲಿ. ಈಗ ಬಾ, ಅವನ ತಲೆಯ ಬಳಿಯಲ್ಲಿರುವ ಭರ್ಜಿಯನ್ನೂ ತಂಬಿಗೆಯನ್ನೂ ತೆಗೆದುಕೊಂಡು ಹೋಗೋಣ,” ಎಂದು ಹೇಳಿದನು.</verse>
				<verse number="12">ಸೌಲನ ತಲೆದಿಂಬಿನ ಬಳಿಯಲ್ಲಿದ್ದ ಭರ್ಜಿ ಹಾಗೂ ತಂಬಿಗೆಗಳನ್ನು ತೆಗೆದುಕೊಂಡು ಹೋದರು. ಯಾರೂ ಕಾಣಲಿಲ್ಲ; ಯಾರಿಗೂ ಗೊತ್ತಾಗಲಿಲ್ಲ, ಯಾರಿಗೂ ಎಚ್ಚರವಾಗಲಿಲ್ಲ. ಏಕೆಂದರೆ ಸರ್ವೇಶ್ವರ ಅವರಿಗೆ ಗಾಢನಿದ್ರೆಯನ್ನು ಬರಮಾಡಿದ್ದರು; ಒಬ್ಬರಿಗೂ ಎಚ್ಚರವಿಲ್ಲದೆ ಎಲ್ಲರು ಮೈಮರೆತು ನಿದ್ರೆಯಲ್ಲಿ ಮಗ್ನರಾಗಿದ್ದರು.</verse>
				<verse number="13">ದಾವೀದನು ತನಗೂ ಪಾಳೆಯಕ್ಕೂ ತಕ್ಕಷ್ಟು ಅಂತರವಿರುವ ಹಾಗೆ ಸುರಕ್ಷಿತವಾದ ದೂರ ಸ್ಥಳಕ್ಕೆ ಹೋಗಿ ಗುಡ್ಡವನ್ನೇರಿ ತುದಿಯಲ್ಲಿ ನಿಂತನು.</verse>
				<verse number="14">ಅಲ್ಲಿಂದ, “ಅಬ್ನೇರನೇ, ನನ್ನ ಮಾತು ಕೇಳಿಸುತ್ತಿದ್ದೇಯೋ?” ಎಂದು ನೇರನ ಮಗನಾದ ಅಬ್ನೇರನಿಗೂ ಸೈನಿಕರಿಗೂ ಕೇಳಿಸುವಂತೆ ಕೂಗಿದನು. ಅಬ್ನೇರನು, “ಅರಸನನ್ನು ಕೂಗುವ ನೀನಾರು?” ಎಂದು ಕೇಳಿದನು.</verse>
				<verse number="15">ದಾವೀದನು ಅಬ್ನೇರನಿಗೆ, “ನೀನು ಶೂರನಲ್ಲವೇ? ಇಸ್ರಯೇಲರಲ್ಲಿ ನಿನಗೆ ಸಮನಾರು? ನೀನು ನಿನ್ನ ಒಡೆಯನಾದ ಅರಸನನ್ನು ಏಕೆ ಕಾಯಲಿಲ್ಲ? ಜನರಲ್ಲಿ ಒಬ್ಬನು ಒಳಗೆ ಹೊಕ್ಕು ನಿನ್ನ ಒಡೆಯನಾದ ಅರಸನನ್ನು ಕೊಲ್ಲಬೇಕೆಂದಿದ್ದನು.</verse>
				<verse number="16">ನೀನು ಹೀಗೆ ಮಾಡುವುದು ಸರಿಯಲ್ಲ. ಸರ್ವೇಶ್ವರನಾಣೆ, ಅವರ ಅಭಿಷಿಕ್ತನಾಗಿರುವ ನಿಮ್ಮ ಒಡೆಯನನ್ನು ಕಾಯದಿರುವ ನೀವು ಮರಣಕ್ಕೆ ಪಾತ್ರರೆಂಬುದೇನೋ ನಿಜ. ಅರಸನ ತಲೆಯ ಬಳಿಯಲ್ಲಿದ್ದ ಭರ್ಜಿ, ತಂಬಿಗೆ ಏನಾದವೋ, ನೋಡು,” ಎಂದು ಕೂಗಿ ಹೇಳಿದನು.</verse>
				<verse number="17">ಸೌಲನು ದಾವೀದನ ಸ್ವರದ ಗುರುತು ಹಿಡಿದನು. “ದಾವೀದನೇ, ನನ್ನ ಪುತ್ರನೇ, ಇದು ನಿನ್ನ ಸ್ವರವೇ?” ಎಂದು ಕೇಳಿದನು. ಅವನು, “ಅರಸನೇ, ನನ್ನ ಒಡೆಯನೇ, ಹೌದು, ನನ್ನ ಸ್ವರವೇ;</verse>
				<verse number="18">ನನ್ನ ಒಡೆಯ, ತಮ್ಮ ಸೇವಕನನ್ನು ಈ ಪ್ರಕಾರ ಹಿಂಸಿಸುವುದೇಕೆ? ನಾನೇನು ಮಾಡಿದೆ? ಯಾವ ಪಾಪಕ್ಕೆ ಕೈಹಾಕಿದೆ?</verse>
				<verse number="19">ನನ್ನ ಅರಸನಾದ ಒಡೆಯರು ದಯವಿಟ್ಟು ತಮ್ಮ ಸೇವಕನ ಮಾತುಗಳನ್ನು ಆಲಿಸಬೇಕು. ನಿಮ್ಮನ್ನು ನನಗೆ ವಿರೋಧವಾಗಿ ಎತ್ತಿ ಕಟ್ಟಿದವರು ಸರ್ವೇಶ್ವರನೇ ಆಗಿರುವ ಪಕ್ಷದಲ್ಲಿ ಅವರಿಗೆ ಗಮಗಮಿಸುವ ನೈವೇದ್ಯವನ್ನು ಸಮರ್ಪಿಸಬೇಕು. ಮನುಷ್ಯರಾಗಿದ್ದರೆ, ಈಗ ಅವರು ನನಗೆ ಸರ್ವೇಶ್ವರನ ಸೌಭಾಗ್ಯದಲ್ಲಿ ಪಾಲುಸಿಕ್ಕದಂತೆ, ‘ಹೋಗಿ ಅನ್ಯದೇವತೆಗಳನ್ನು ಪೂಜಿಸು’ ಎಂದು ನನ್ನನ್ನು ತಳ್ಳಿಬಿಟ್ಟಿದ್ದಾರೆ. ಆದುದರಿಂದ ಸರ್ವೇಶ್ವರನ ದೃಷ್ಟಿಯಲ್ಲಿ ಅವರು ಶಾಪಗ್ರಸ್ತರಾಗಲಿ!</verse>
				<verse number="20">ಸರ್ವೇಶ್ವರನ ಸಾನ್ನಿಧ್ಯವಿಲ್ಲದಿರುವ ಈ ದೇಶದಲ್ಲಿ ನಾನು ರಕ್ತ ಚೆಲ್ಲಿ ಸಾಯುವಂಥಾಗದಿರಲಿ. ಅಕಟಾ, ಗುಡ್ಡಗಳಲ್ಲಿ ಕೌಜುಗವನ್ನು ಹಿಡಿಯಹೊರಟ ಬೇಟೆಗಾರನೋ ಎಂಬಂತೆ ಇಸ್ರಯೇಲರ ಅರಸ ಹೊರಟುಬಂದು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾರಲ್ಲಾ!” ಎಂದನು.</verse>
				<verse number="21">ಆಗ ಸೌಲನು, “ನಾನು ಪಾಪಮಾಡಿದೆ, ದಾವೀದನೇ, ನನ್ನ ಪುತ್ರನೇ, ಹಿಂದಿರುಗಿ ಬಾ; ಈ ದಿನ ನನ್ನ ಜೀವ ನಿನ್ನ ದೃಷ್ಟಿಯಲ್ಲಿ ಬಲು ಬೆಲೆಯುಳ್ಳದೆಂದು ಮಾನ್ಯವಾಯಿತು. ಆದುದರಿಂದ ನಾನು ಇನ್ನು ಮುಂದೆ ನಿನಗೆ ಕೇಡು ಮಾಡುವುದಿಲ್ಲ. ಈವರೆಗೆ ನಾನು ಮಾಡಿದ್ದು ಹುಚ್ಚುತನ ಹಾಗೂ ದೊಡ್ಡ ತಪ್ಪು,” ಎಂದು ಹೇಳಿದನು.</verse>
				<verse number="22">ದಾವೀದನು, “ಅರಸರೇ, ಇಗೋ, ನಿಮ್ಮ ಭರ್ಜಿ ಇಲ್ಲಿದೆ; ಸೇವಕರಲ್ಲೊಬ್ಬನು ಬಂದು ತೆಗೆದುಕೊಂಡು ಹೋಗಲಿ.</verse>
				<verse number="23">ಸರ್ವೇಶ್ವರ ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರ ಫಲವನ್ನು ಕೊಡುವರು. ಅವರು ಈ ದಿನ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ನೀವು ಸರ್ವೇಶ್ವರನ ಅಭಿಷಿಕ್ತರೆಂದು ನಾನು ನಿಮ್ಮ ಮೇಲೆ ಕೈಹಾಕಲಿಲ್ಲ.</verse>
				<verse number="24">ನಾನು ಈ ದಿನ ನಿಮ್ಮ ಜೀವವನ್ನು ಮಾನ್ಯವಾದದ್ದೆಂಣಿಸಿದಂತೆ ಸರ್ವೇಶ್ವರ ನನ್ನ ಜೀವವನ್ನೂ ಮಾನ್ಯವಾದದ್ದೆಂದೆಣಿಸಿ ನನ್ನನ್ನು ಎಲ್ಲ ಇಕ್ಕಟ್ಟಿನಿಂದ ಬಿಡಿಸಲಿ,” ಎಂದನು.</verse>
				<verse number="25">ಆಗ ಸೌಲನು ದಾವೀದನಿಗೆ, “ಪುತ್ರನೇ, ದಾವೀದನೇ, ದೇವರು ನಿನ್ನನ್ನು ಹರಸಲಿ! ನೀನು ಮಹಾಕಾರ್ಯಗಳನ್ನು ಸಾಧಿಸಿ ಯಶಸ್ವಿಯಾಗು,” ಎಂದು ಹೇಳಿ ತನ್ನ ಊರಿಗೆ ಹೊರಟನು; ದಾವೀದನು ತನ್ನ ದಾರಿ ಹಿಡಿದನು.</verse>
			</chapter>
			<chapter number="27">
				<verse number="1">ದಾವೀದನು ತನ್ನ ಮನಸ್ಸಿನಲ್ಲೇ, “ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇ ಬೇಕು. ಆದುದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆಮೇಲೆ ಸೌಲನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುವನು. ನಾನು ಅವನ ಕೈಯಿಂದ ತಪ್ಪಿಸಿಕೊಂಡು ಸುರಕ್ಷಿತನಾಗಿರುವೆನು,” ಎಂದುಕೊಂಡನು.</verse>
				<verse number="2">ಅಂತೆಯೇ ಅವನು ತನ್ನ ಆರುನೂರು ಮಂದಿ ಸೈನಿಕರೊಡನೆ ಗತ್ ಊರಿನ ಅರಸನೂ ಮಾವೋಕನ ಮಗನೂ ಆದ ಆಕೀಷನ ಬಳಿಗೆ ಹೋದನು.</verse>
				<verse number="3">ಅವನೂ ಅವನ ಜನರೂ ತಮ್ಮ ತಮ್ಮ ಕುಟುಂಬಸಹಿತವಾಗಿ ಆಕೀಷನ ಊರಾದ ಗತ್ ಊರಿನಲ್ಲಿ ನೆಲೆಸಿದರು. ದಾವೀದನ ಹೆಂಡತಿಯರಾಗಿದ್ದ ಜೆಸ್ರೀಲಿನವಳಾದ ಅಹೀನೋವಮಳು ಹಾಗು ಕರ್ಮೇಲ್ಯನಾದ ನಾಬಾಲನ ಹೆಂಡತಿ ಆಗಿದ್ದ ಅಬೀಗೈಲಳು ಅವನ ಸಂಗಡ ಇದ್ದರು.</verse>
				<verse number="4">ದಾವೀದನು ತಪ್ಪಿಸಿಕೊಂಡು ಗತ್ ಊರಿಗೆ ಹೋದನೆಂಬ ವರ್ತಮಾನವನ್ನು ಸೌಲನು ಕೇಳಿದ ಮೇಲೆ ಅವನನ್ನು ಬೆನ್ನಟ್ಟಿಹೋಗುವುದನ್ನು ಬಿಟ್ಟುಬಿಟ್ಟನು.</verse>
				<verse number="5">ಒಂದು ದಿನ ದಾವೀದನು ಆಕೀಷನಿಗೆ, “ನಿಮ್ಮ ಸೇವಕನಾದ ನಾನು ನಿಮ್ಮ ಸಂಗಡ ರಾಜಧಾನಿಯಲ್ಲೇಕೆ ವಾಸಿಸಬೇಕು? ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದಾದರೆ ಯಾವುದಾದರೊಂದು ಹಳ್ಳಿಯಲ್ಲಿ ನನಗೆ ಸ್ಥಳಕೊಡಿಸಿ; ನಾನು ಅಲ್ಲೆ ವಾಸಿಸುವೆನು,” ಎಂದನು.</verse>
				<verse number="6">ಆಕೀಷನು ಕೂಡಲೆ ಅವನಿಗೆ ಚಿಕ್ಲಗ್ ಊರನ್ನು ಕೊಟ್ಟನು. ಆದುದರಿಂದ “ಚಿಕ್ಲಗ್” ಎಂಬುದು ಇಂದಿನವರೆಗೂ ಯೆಹೂದ ಅರಸರಿಗೆ ಸೇರಿದೆ.</verse>
				<verse number="7">ದಾವೀದನು ಫಿಲಿಷ್ಟಿಯರ ದೇಶದಲ್ಲಿ ಒಂದು ವರ್ಷ ಮತ್ತು ನಾಲ್ಕು ತಿಂಗಳು ವಾಸವಾಗಿದ್ದನು.</verse>
				<verse number="8">ಈ ಅವಧಿಯಲ್ಲಿ ಅವನು ಮತ್ತು ಅವನ ಜನರು ಗೆಷೂರ್ಯರ ಮೇಲೆ, ಗಿಜ್ರೀಯರ ಮೇಲೆ ಹಾಗು ಅಮಾಲೇಕ್ಯರ ಮೇಲೆ ದಾಳಿಮಾಡುತ್ತಿದ್ದರು. ಇವರುಗಳ ಪ್ರಾಂತ್ಯಗಳು ತೇಲಾಮಿನಿಂದ ಶೂರಿನವರೆಗೂ ಹಾಗು ಈಜಿಪ್ಟಿನವರೆಗೂ ವಿಸ್ತರಿಸಿತ್ತು.</verse>
				<verse number="9">ಸ್ತ್ರೀಪುರುಷರಲ್ಲಿ ಒಬ್ಬರನ್ನೂ ಉಳಿಸದೆ ದೇಶದ ನಿವಾಸಿಗಳನ್ನೆಲ್ಲ ಕೊಂದು, ದನ, ಕುರಿ, ಕತ್ತೆ, ಒಂಟೆ, ಉಡುಗೊರೆ ಇವುಗಳನ್ನು ತೆಗೆದುಕೊಂಡು ದಾವೀದನು ಆಕೀಷನ ಬಳಿಗೆ ಹೋಗುತ್ತಿದ್ದನು.</verse>
				<verse number="10">ಆಕೀಷನು, “ಈ ಹೊತ್ತು ಯಾವ ಪ್ರಾಂತ್ಯದವರನ್ನು ಸೂರೆಮಾಡಿಕೊಂಡು ಬಂದಿರಿ?” ಎಂದು ಕೇಳುತ್ತಿದ್ದನು. ದಾವೀದನು ಅವನಿಗೆ, ದಕ್ಷಿಣ ಪ್ರಾಂತ್ಯದಲ್ಲಿರುವ ಯೆಹೂದ್ಯರು, ಎರಹ್ಮೇಲ್ಯರು, ಕೇನ್ಯರು ಇವರಲ್ಲಿ ಯಾರ ಹೆಸರನ್ನಾದರೂ ಹೇಳುತ್ತಿದ್ದನು.</verse>
				<verse number="11">ದಾವೀದನು ತನ್ನ ಕೃತ್ಯವನ್ನು ಜನರು ಹರಡಬಹುದೆಂದು ನೆನೆಸಿ ಅವನು ಯಾರನ್ನೂ ಗತ್ ಊರಿಗೆ ತಾರದೆ ಸ್ತ್ರೀಪುರುಷರನ್ನೆಲ್ಲ ಅಲ್ಲೇ ಕೊಂದುಹಾಕುತ್ತಿದ್ದನು. ಅವನು ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದ ಅವಧಿಯಲ್ಲಿ ಇದೇ ರೀತಿ ಮಾಡುತ್ತಿದ್ದನು.</verse>
				<verse number="12">“ದಾವೀದನ ಹೆಸರು ಸ್ವಜನರಾದ ಇಸ್ರಯೇಲರಲ್ಲೇ ತಿರಸ್ಕೃತವಾಗಿದೆ. ಆದುದರಿಂದ ಇವನು ಎಂದೆಂದಿಗೂ ತನ್ನ ಅಧೀನನಾಗಿಯೇ ಇರುವನು,” ಎಂದು ಆಕೀಷನು ನಂಬಿದ್ದನು.</verse>
			</chapter>
			<chapter number="28">
				<verse number="1">ಆ ಕಾಲದಲ್ಲಿ ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಸೈನ್ಯವನ್ನು ಕೂಡಿಸತೊಡಗಿದರು. ಆಗ ಆಕೀಷನು ದಾವೀದನಿಗೆ, “ನೀನೂ ನಿನ್ನ ಜನರೂ ಯುದ್ಧಕ್ಕೆ ನನ್ನ ಜೊತೆಯಲ್ಲೇ ಬರಬೇಕೆಂಬುದು ನಿನಗೆ ಗೊತ್ತಿದೆಯಲ್ಲವೇ?’ ಎಂದನು.</verse>
				<verse number="2">ದಾವೀದನು, “ಹೌದು, ತಮ್ಮ ಸೇವಕನ ಸಾಹಸ ತಮಗೇ ಗೊತ್ತಾಗುವುದು,” ಎಂದನು. ಆಕೀಷನು, “ಹಾಗಾದರೆ ಯುದ್ಧಕಾಲದಲ್ಲೆಲ್ಲಾ ನಿನ್ನನ್ನೇ ನನ್ನ ಮೈಗಾವಲಿಗೆ ನೇಮಿಸಿಕೊಳ್ಳುತ್ತೇನೆ,” ಎಂದನು.</verse>
				<verse number="3">ಸಮುವೇಲನು ಮರಣಹೊಂದಿದ್ದನು. ಇಸ್ರಯೇಲರು ಅವನಿಗಾಗಿ ಸಂತಾಪ ಸೂಚಿಸುತ್ತಾ ಅವನ ಶವವನ್ನು ಅವನ ಸ್ವಂತ ಊರಾದ ರಾಮಾದಲ್ಲಿ ಸಮಾಧಿಮಾಡಿದ್ದರು. ಸೌಲನು ಭೂತಪ್ರೇತಗಳನ್ನು ವಿಚಾರಿಸುವವರನ್ನೂ ಬೇತಾಳಿಕರನ್ನೂ ನಾಡಿನಿಂದ ಹೊರಡಿಸಿಬಿಟ್ಟಿದ್ದನು.</verse>
				<verse number="4">ಫಿಲಿಷ್ಟಿಯರು ಸೈನ್ಯಕೂಡಿಸಿಕೊಂಡು ಬಂದು ಶೂನೇಮಿನಲ್ಲಿ ಪಾಳೆಯಮಾಡಿಕೊಂಡಿದ್ದರು. ಸೌಲನು ಸಮಸ್ತ ಇಸ್ರಯೇಲರೊಡನೆ ಬಂದು ಗಿಲ್ಬೋವದಲ್ಲಿ ಇಳಿದುಕೊಂಡನು.</verse>
				<verse number="5">ಫಿಲಿಷ್ಟಿಯರ ಪಾಳೆಯವನ್ನು ಕಂಡಾಗ ಭಯಭೀತಿಯಿಂದ ಅವನ ಎದೆಯೊಡೆಯಿತು.</verse>
				<verse number="6">ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದರಿಂದಾಗಲಿ, ಕನಸುಗಳಿಂದಾಗಲಿ, ಊರಿಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಅವನಿಗೆ ಉತ್ತರ ಸಿಗಲಿಲ್ಲ.</verse>
				<verse number="7">ಆದುದರಿಂದ ಅವನು ತನ್ನ ಸೇವಕರಿಗೆ, “ಭೂತಪ್ರೇತಗಳಲ್ಲಿ ವಿಚಾರಿಸಬಲ್ಲ ಒಬ್ಬ ಸ್ತ್ರೀಯನ್ನು ಹುಡುಕಿರಿ; ನಾನು ಆಕೆಯ ಬಳಿಗೇ ಹೋಗಿ ವಿಚಾರಿಸುವೆನು,” ಎಂದು ಹೇಳಿದನು. ಅವರು, “ಅಂಥವಳೊಬ್ಬಳು ಏಂದೋರಿನಲ್ಲಿದ್ದಾಳೆ,” ಎಂದರು.</verse>
				<verse number="8">ಆಗ ಸೌಲನು ಉಡಿಗೆತೊಡಿಗೆಗಳಿಂದ ತನ್ನನ್ನು ಮಾರ್ಪಡಿಸಿಕೊಂಡು ಇಬ್ಬರು ಸೇವಕರೊಡನೆ ಹೊರಟು ರಾತ್ರಿಯಲ್ಲಿ ಆಕೆಯ ಮನೆಗೆ ಬಂದನು. “ದಯವಿಟ್ಟು ನನಗಾಗಿ ಭೂತಪ್ರೇತಗಳಲ್ಲಿ ವಿಚಾರಿಸಿ ಶಾಸ್ತ್ರ ಹೇಳು; ನಾನು ಯಾವನ ಹೆಸರು ಹೇಳುತ್ತೇನೋ ಅವನನ್ನು ಇಲ್ಲಿಗೆ ಬರಮಾಡು,” ಎಂದು ಆಕೆಯನ್ನು ಬೇಡಿಕೊಂಡನು.</verse>
				<verse number="9">ಆಗ ಆಕೆ ಅವನಿಗೆ, “ಸೌಲನು ಮಾಡಿದ್ದು ನಿನಗೆ ಗೊತ್ತುಂಟು; ಅವನು ಭೂತಪ್ರೇತಗಳನ್ನು ವಿಚಾರಿಸುವವರನ್ನು ಹಾಗು ಬೇತಾಳಿಕರನ್ನು ನಾಡಿನಿಂದ ಹೊರಡಿಸಿಬಿಟ್ಟನಲ್ಲವೇ? ಹೀಗಿದ್ದರೂ ನಾನು ಸಾಯುವಂತೆ ನೀನು ನನ್ನ ಪ್ರಾಣಕ್ಕೆ ಉರಲೊಡ್ಡುವುದೇಕೆ?” ಎಂದಳು.</verse>
				<verse number="10">ಅದಕ್ಕೆ ಸೌಲನು, ” ಸರ್ವೇಶ್ವರನಾಣೆ, ಈ ವಿಷಯದಲ್ಲಿ ನೀನು ದಂಡನೆಗೆ ಗುರಿಯಾಗುವುದಿಲ್ಲ,” ಎಂದು ಆಕೆಗೆ ಸರ್ವೇಶ್ವರನ ಹೆಸರಿನಲ್ಲಿ ಪ್ರಮಾಣ ಮಾಡಿದನು.</verse>
				<verse number="11">ಆಗ ಆ ಸ್ತ್ರೀ, “ನಿನಗೆ ಯಾರನ್ನು ಬರಮಾಡಬೇಕು?” ಎಂದಳು. “ಸಮುವೇಲನನ್ನು,” ಎಂದು ಉತ್ತರಕೊಟ್ಟನು.</verse>
				<verse number="12">ಆ ಸ್ತ್ರೀ ಸಮುವೇಲನನ್ನು ಕಂಡಕೂಡಲೆ ಗಟ್ಟಿಯಾಗಿ ಕೂಗಿ ಸೌಲನಿಗೆ, “ನೀನು ನನ್ನನ್ನು ವಂಚಿಸಿದ್ದೇಕೆ? ನೀನು ಸೌಲನಲ್ಲವೇ?,” ಎಂದಳು.</verse>
				<verse number="13">ಆಗ ಅರಸನು, “ಹೆದರಬೇಡ, ನಿನಗೇನು ಕಾಣಿಸುತ್ತದೆ?” ಎಂದು ಆಕೆಯನ್ನು ಕೇಳಿದನು. “ಭೂಮಿಯೊಳಗಿಂದ ಪ್ರೇತಾತ್ಮವೊಂದು ಬರುತ್ತಿರುವುದನ್ನು ನೋಡುತ್ತಿದ್ದೇನೆ,” ಎಂದು ಉತ್ತರಕೊಟ್ಟಳು.</verse>
				<verse number="14">ಅವನು ಮತ್ತೆ, “ಅವನ ರೂಪ ಹೇಗಿದೆ?” ಎಂದು ಕೇಳಿದನು. ಆಕೆ, “ನಿಲುವಂಗಿಯನ್ನು ತೊಟ್ಟುಕೊಂಡ ಒಬ್ಬ ಮುದುಕ ಬರುತ್ತಿದ್ದಾನೆ,” ಎಂದು ಹೇಳಿದಳು. ಅವನು ಸಮುವೇಲನೇ ಎಂದು ಸೌಲನು ತಿಳಿದು ನೆಲದಮಟ್ಟಿಗೂ ಬಾಗಿ ನಮಸ್ಕರಿಸಿದನು.</verse>
				<verse number="15">ಆಗ ಸಮುವೇಲನು ಸೌಲನನ್ನು, “ನೀನು ನನ್ನ ವಿಶ್ರಾಂತಿಯನ್ನು ಕೆಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಏಕೆ ಬರಮಾಡಿದೆ?” ಎಂದು ಕೇಳಿದನು. ಅದಕ್ಕೆ ಸೌಲನು, “ನಾನು ಬಲು ಇಕ್ಕಟ್ಟಿನಲ್ಲಿ ಇದ್ದೇನೆ; ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ; ದೇವರು ನನ್ನನ್ನು ಕೈಬಿಟ್ಟು ದೂರಹೋಗಿದ್ದಾರೆ; ಅವರು ನನಗೆ ಪ್ರವಾದಿಗಳಿಂದಾಗಲಿ, ಕನಸುಗಳಿಂದಾಗಲಿ ಉತ್ತರಕೊಡಲೊಲ್ಲರು. ಆದುದರಿಂದ ನಾನು ಮಾಡಬೇಕಾದುದನ್ನು ನೀನು ತಿಳಿಸುವೆಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು,” ಎಂದನು.</verse>
				<verse number="16">ಆಗ ಸಮುವೇಲನು, “ಸರ್ವೇಶ್ವರ ನಿನ್ನನ್ನು ಕೈಬಿಟ್ಟು ನಿನಗೆ ವಿರೋಧಿಯಾದ ಮೇಲೆ ನೀನು ನನ್ನನ್ನು ವಿಚಾರಿಸುವುದೇಕೆ?</verse>
				<verse number="17">ಅವರು ನನ್ನ ಮುಖಾಂತರ ನಿನಗೆ ಹೇಳಿದ್ದನ್ನು ನೆರವೇರಿಸಿದ್ದಾರೆ; ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ನೆರೆಯವನಾದ ದಾವೀದನಿಗೆ ಕೊಟ್ಟಿದ್ದಾರೆ.</verse>
				<verse number="18">ನೀನು ಸರ್ವೇಶ್ವರನ ಮಾತನ್ನು ಕೇಳಲಿಲ್ಲ; ಅವರು ಅಮಾಲೇಕ್ಯರ ಮೇಲೆ ಉಗ್ರಕೋಪಗೊಂಡು ಮಾಡಿದ ಕೋಪಾಜ್ಞೆಯನ್ನು ನೀನು ನೆರವೇರಿಸಲಿಲ್ಲ. ಆದುದರಿಂದಲೇ ಸರ್ವೇಶ್ವರ ಈಗ ನಿನಗೆ ಹೀಗೆ ಮಾಡುತ್ತಾರೆ.</verse>
				<verse number="19">ನಿನ್ನ ಸಮೇತ ಇಸ್ರಯೇಲರನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವರು. ನಾಳೆ ನೀನೂ ನಿನ್ನ ಮಕ್ಕಳೂ ನಾನಿರುವಲ್ಲಿಗೆ ಬರುವಿರಿ. ಸರ್ವೇಶ್ವರ ಇಸ್ರಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಗೆ ಒಪ್ಪಿಸುವರು,” ಎಂದು ಹೇಳಿದನು.</verse>
				<verse number="20">ಸೌಲನು ಸಮುವೇಲನ ಮಾತುಗಳನ್ನು ಕೇಳಿದ ಕೂಡಲೆ ದಿಗ್ಭ್ರಾಂತನಾಗಿ ನೆಲದ ಮೇಲೆ ಕೈಕಾಲು ಚಾಚಿಬಿದ್ದನು. ಅವನು ಇಡೀ ದಿವಸ ಊಟಮಾಡಿರಲಿಲ್ಲ. ಆದುದರಿಂದ ಅವನಲ್ಲಿ ಬಲವೇ ಇರಲಿಲ್ಲ.</verse>
				<verse number="21">ಆ ಸ್ತ್ರೀ ಸೌಲನ ಹತ್ತಿರಕ್ಕೆ ಬಂದು ಅವನು ಬಹುಭೀತನಾಗಿದ್ದಾನೆಂದು ಕಂಡು, “ನಿಮ್ಮ ದಾಸಿಯಾದ ನಾನು ನಿಮ್ಮ ಮಾತು ಕೇಳಿದೆನು; ಕೈಯಲ್ಲಿ ಜೀವ ಹಿಡಿದವಳಾಗಿ ನಿಮ್ಮ ಅಪ್ಪಣೆಯನ್ನು ನೆರವೇರಿಸಿದೆನು.</verse>
				<verse number="22">ಆದುದರಿಂದ ಈಗ ನೀವು ದಯವಿಟ್ಟು ನಿಮ್ಮ ದಾಸಿಯ ಮಾತನ್ನು ಕೇಳಬೇಕು. ಸ್ವಲ್ಪ ಆಹಾರ ತರುತ್ತೇನೆ, ಪ್ರಯಾಣಕ್ಕೆ ಬಲಬರುವ ಹಾಗೆ ಅದನ್ನು ಊಟಮಾಡಿ,” ಎಂದು ಹೇಳಿದಳು.</verse>
				<verse number="23">ಅವನು, “ಒಲ್ಲೆ; ಊಟಮಾಡುವುದಿಲ್ಲ,” ಎಂದನು. ಆದರೆ, ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡಿದ್ದರಿಂದ ಅವನು ಕಡೆಗೆ ಅವರ ಮಾತಿಗೆ ಒಪ್ಪಿ ನೆಲದಿಂದೆದ್ದು ಮಂಚದ ಮೇಲೆ ಕುಳಿತುಕೊಂಡನು.</verse>
				<verse number="24">ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರುವಿತ್ತು. ಆಕೆ ಶೀಘ್ರವಾಗಿ ಅದನ್ನು ಕೊಯ್ದು, ಪಕ್ವಮಾಡಿ, ಹಿಟ್ಟನ್ನು ತೆಗೆದುಕೊಂಡು ನಾದಿ, ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು,</verse>
				<verse number="25">ಸೌಲನಿಗೂ ಅವನ ಸೇವಕರಿಗೂ ಬಡಿಸಿದಳು. ಅವರು ಊಟಮಾಡಿ ಅದೇ ರಾತ್ರಿ ಹೊರಟುಹೋದರು.</verse>
			</chapter>
			<chapter number="29">
				<verse number="1">ಫಿಲಿಷ್ಟಿಯರು ತಮ್ಮ ಸೈನ್ಯವನ್ನು ಕೂಡಿಸಿಕೊಂಡು ಬಂದು ಅಫೇಕಿನಲ್ಲಿ ಪಾಳೆಯಮಾಡಿಕೊಂಡರು. ಇಸ್ರಯೇಲರು ಜೆಸ್ರೀಲ್ ಬೈಲಿನಲ್ಲಿರುವ ಬುಗ್ಗೆಯ ಬಳಿಯಲ್ಲಿ ಇಳಿದುಕೊಂಡರು.</verse>
				<verse number="2">ಫಿಲಿಷ್ಟಿಯ ರಾಜರುಗಳ ಸೈನಿಕರು ನೂರು ನೂರು ಮಂದಿಯಾಗಿ ಹಾಗು ಸಾವಿರ ಸಾವಿರ ಮಂದಿಯಾಗಿ ಬರುತ್ತಿರುವಾಗ ದಾವೀದನು ತನ್ನ ಜನರ ಸಹಿತವಾಗಿ ಆಕೀಷನ ಸಂಗಡ ಹಿಂಭಾಗದಲ್ಲಿದ್ದನು.</verse>
				<verse number="3">ಆಗ ಫಿಲಿಷ್ಟಿಯ ರಾಜರು, “ಈ ಹಿಬ್ರಿಯರು ಏಕೆ?” ಎಂದು ಆಕೀಷನನ್ನು ಕೇಳಿದರು. “ಈತ, ಇಸ್ರಯೇಲರ ಅರಸನಾದ ಸೌಲನ ಸೇವಕನಾದ ದಾವೀದನಲ್ಲವೇ? ಇವನು ಇಷ್ಟು ವರ್ಷ, ಇಷ್ಟು ದಿವಸಗಳಿಂದ ನನ್ನ ಬಳಿಯಲ್ಲೇ ಇದ್ದಾನೆ; ಸೌಲನನ್ನು ಬಿಟ್ಟು ನನ್ನ ಹತ್ತಿರ ಬಂದ ದಿವಸ ಮೊದಲುಗೊಂಡು ಇಂದಿನವರೆಗೂ ನಾನು ಇವನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ,” ಎಂದು ಆಕೀಷನು ಉತ್ತರಕೊಟ್ಟನು.</verse>
				<verse number="4">ಆದರೆ ಆ ಫಿಲಿಷ್ಟಿಯ ರಾಜರುಗಳು ಅವನ ಮೇಲೆ ಕೋಪಗೊಂಡು,:ಈ ಮನುಷ್ಯನನ್ನು ಕಳುಹಿಸಿಬಿಡು; ಇವನು ಹಿಂದಿರುಗಿ ಹೋಗಿ ನೀನು ನೇಮಿಸಿದ್ದ ಸ್ಥಳದಲ್ಲೇ ವಾಸಿಸಲಿ; ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು. ಬಂದರೆ ನಮಗೇ ಶತ್ರುವಾಗಿ ನಿಂತಾನು. ಫಿಲಿಷ್ಟಿಯರ ತಲೆಗಳನ್ನು ಕಡುಯುವುದರಿಂದಲೇ ಇವನು ತನ್ನ ಯಜಮಾನನ ಮೆಚ್ಚಿಕೆಯನ್ನು ಪಡೆಯಬಹುದಲ್ಲವೇ?</verse>
				<verse number="5">‘ಸೌಲನು ಕೊಂದನು ಸಾವಿರಗಟ್ಟಳೆ, ದಾವೀದನೋ ಕೊಂದನು ಹತ್ತು ಸಾವಿರಗಟ್ಟಳೆ,’ ಎಂದು ಮಹಿಳೆಯರು ಕುಣಿಯುತ್ತಾ ಪರಸ್ಪರವಾಗಿ ಹಾಡಿದ್ದು ಈ ದಾವೀದನನ್ನೇ ಕುರಿತು ಅಲ್ಲವೇ?’ ಎಂದರು.</verse>
				<verse number="6">ಆಗ ಆಕೀಷನು ದಾವೀದನನ್ನು ಕರೆದು, “ಸರ್ವೇಶ್ವರನಾಣೆ, ನೀನು ಯಥಾರ್ಥನು; ನೀನು ನನ್ನ ಸಂಗಡ ಪಾಳೆಯದಲ್ಲಿದ್ದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇರುವುದು ಯುಕ್ತವೆಂದು ನನಗೆ ತೋರಿತು. ನೀನು ಬಂದಂದಿನಿಂದ ಇಂದಿನವರೆಗೂ ನಿನ್ನಲ್ಲಿ ಯಾವ ದೋಷವನ್ನೂ ಕಾಣಲಿಲ್ಲ.</verse>
				<verse number="7">ಆದರೆ ರಾಜರುಗಳು ನಿನ್ನನ್ನು ಮೆಚ್ಚುವುದಿಲ್ಲ; ಆದುದರಿಂದ ನೀನು ಸಮಾಧಾನದಿಂದ ಹಿಂದಿರುಗಿ ಹೋಗು; ಅವರನ್ನು ಸಿಟ್ಟುಗೊಳಿಸಬಾರದು,” ಎಂದು ಹೇಳಿದನು.</verse>
				<verse number="8">ದಾವೀದನು ಆಕೀಷನಿಗೆ, “ನಾನೇನು ಮಾಡಿದೆ? ನಿಮ್ಮ ಸೇವಕನಾದ ನಾನು ನಿಮ್ಮ ಬಳಿಗೆ ಬಂದಂದಿನಿಂದ ಇಂದಿನವರೆಗೂ ನನ್ನಲ್ಲಿ ಯಾವ ಅಪರಾಧವನ್ನು ಕಂಡಿರಿ? ರಾಜರಾದ ನನ್ನ ಒಡೆಯರ ಜೊತೆಯಲ್ಲಿ ಹೋಗಿ ಅವರ ಶತ್ರುಗಳೊಡನೆ ನಾನೇಕೆ ಯುದ್ಧಮಾಡಬಾರದು? ಎಂದನು.</verse>
				<verse number="9">ಆಗ ಆಕೀಷನು ದಾವೀದನಿಗೆ, “ನೀನು ಒಳ್ಳೆಯವನೆಂದು ನನಗೆ ಗೊತ್ತಿದೆ; ನನ್ನ ದೃಷ್ಟಿಯಲ್ಲಿ ನೀನು ದೇವದೂತನಂತಿರುವೆ; ಆದರೆ ಫಿಲಿಷ್ಟಿಯದ ರಾಜರುಗಳು, ‘ಇವನು ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೊರಡಬಾರದು’ ಎಂದು ಹೇಳುತ್ತಾರೆ;</verse>
				<verse number="10">ಆದ್ದರಿಂದ ನೀನೂ ನಿನ್ನ ಸಂಗಡ ಬಂದ ನಿನ್ನ ಒಡೆಯನ ಸೇವಕರೂ ನಾಳೆ ಬೆಳಿಗ್ಗೆ ಎದ್ದು ಹೊತ್ತುಮೂಡಿದ ಕೂಡಲೆ ಹಿಂದಿರುಗಿಹೋಗಿ,” ಎಂದು ಹೇಳಿದನು.</verse>
				<verse number="11">ದಾವೀದನು ತನ್ನ ಜನರೊಡನೆ ಬೆಳಿಗ್ಗೆ ಎದ್ದು ಹಿಂದಿರುಗಿ ಫಿಲಿಷ್ಟಿಯರ ದೇಶಕ್ಕೆ ಹೊರಟನು. ಫಿಲಿಷ್ಟಿಯರು ಜೆಸ್ರೀಲಿಗೆ ಹೋದರು.</verse>
			</chapter>
			<chapter number="30">
				<verse number="1">ದಾವೀದನೂ ಅವನ ಜನರೂ ಮಾರನೆಯ ದಿನ ಚಿಕ್ಲಗ್ ಊರನ್ನು ಸೇರಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣಪ್ರಾಂತ್ಯಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿದ್ದರು.</verse>
				<verse number="2">ಅದರಲ್ಲಿದ್ದ ಎಲ್ಲಾ ಹೆಂಗಸರನ್ನೂ ಚಿಕ್ಕವರನ್ನೂ ದೊಡ್ಡವರನ್ನೂ ಸೆರೆಹಿಡಿದುಕೊಂಡು ಹೋಗಿ ಇದ್ದರು; ಆದರೆ ಯಾರನ್ನೂ ಕೊಂದಿರಲಿಲ್ಲ.</verse>
				<verse number="3">ದಾವೀದನೂ ಅವನ ಜನರೂ ತಮ್ಮ ಊರಿಗೆ ಬಂದಾಗ ಅದು ಸುಟ್ಟುಹೋಗಿರುವುದನ್ನೂ ತಮ್ಮ ಹೆಂಡತಿಯರೂ ಗಂಡು-ಹೆಣ್ಣು ಮಕ್ಕಳೂ ಸೆರೆಯಾಗಿ ಹೋಗಿರುವುದನ್ನೂ ಕಂಡರು.</verse>
				<verse number="4">ದುಃಖ ತಾಳಲಾಗದೆ ದೀರ್ಘಕಾಲ ಅತ್ತು ಗೋಳಾಡಿದರು.</verse>
				<verse number="5">ದಾವೀದನ ಇಬ್ಬರು ಹೆಂಡತಿಯರಾದ ಜೆಸ್ರೀಲಿನವಳಾದ ಅಹೀನೋವಮಳು ಮತ್ತು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳು ಕೂಡ ಸೆರೆಯಾಗಿ ಹೋಗಿದ್ದರು.</verse>
				<verse number="6">ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಮಾತ್ರವಲ್ಲ, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಆದುದರಿಂದ ಅವನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದನು.</verse>
				<verse number="7">ಆದರೂ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿ ಧೈರ್ಯ ತಂದುಕೊಂಡನು. ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, “ದಯವಿಟ್ಟು ‘ಏಫೋದ’ನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದು ಹೇಳಿದನು. ಅವನು ತಂದನು.</verse>
				<verse number="8">ಆಗ ದಾವೀದನು ಸರ್ವೇಶ್ವರನನ್ನು, “ನಾನು ಆ ದಾಳಿಕಾರರನ್ನು ಬೆನ್ನಟ್ಟಬಹುದೇ? ಅವರು ನನಗೆ ವಶವಾಗುವರೇ?” ಎಂದು ಕೇಳಿದನು. “ಬೆನ್ನಟ್ಟು, ಅವರು ನಿನ್ನ ವಶವಾಗುವರು, ನೀನು ನಿನ್ನವರೆಲ್ಲರನ್ನೂ ಬಿಡಿಸಿಕೊಂಡು ಬರುವೆ,” ಎಂದು ಉತ್ತರಕೊಟ್ಟನು ಸರ್ವೇಶ್ವರ.</verse>
				<verse number="9">ದಾವೀದನೂ ಅವನ ಸಂಗಡ ಇದ್ದ ಆರುನೂರು ಮಂದಿ ಸೈನಿಕರೂ ಹೊರಟು ಬೆಸೋರ್ ಹಳ್ಳಕ್ಕೆ ಬಂದರು.</verse>
				<verse number="10">ಆಮೇಲೆ ಆ ಹಳ್ಳದಿಂದ ಮೇಲೆ ಹತ್ತಲಾರದಷ್ಟು ಆಯಾಸಗೊಂಡ ಇನ್ನೂರು ಜನರು ಅಲ್ಲೇ ನಿಂತುಬಿಟ್ಟರು. ಆದ್ದರಿಂದ ದಾವೀದನು ಉಳಿದ ನಾನೂರು ಜನರನ್ನೇ ಕರೆದುಕೊಂಡು ಮುಂದೆ ನಡೆದನು.</verse>
				<verse number="11">ಅವನ ಜನರು ಅಡವಿಯಲ್ಲಿ ಒಬ್ಬ ಈಜಿಪ್ಟಿನವನು ಬಿದ್ದಿರುವುದನ್ನು ಕಂಡು ಅವನನ್ನು ದಾವೀದನ ಬಳಿಗೆ ತಂದು ಅವನಿಗೆ ರೊಟ್ಟಿ ತಿನ್ನಿಸಿ, ನೀರು ಕುಡಿಸಿದರು.</verse>
				<verse number="12">ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷಿಗೊಂಚಲುಗಳನ್ನೂ ಕೊಟ್ಟರು. ಮೂರು ದಿವಸ ಹಗಲಿರುಳು ಅನ್ನಪಾನವಿಲ್ಲದ್ದರಿಂದ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿಂದು ಚೇತರಿಸಿಕೊಂಡನು.</verse>
				<verse number="13">ಆಗ ದಾವೀದನು ಅವನನ್ನು, “ನೀನು ಯಾರ ಕಡೆಯವನು? ಎಲ್ಲಿಯವನು?” ಎಂದು ಕೇಳಿದನು. ಆಗ ಅವನು, “ನಾನು ಈಜಿಪ್ಟಿನವನು; ಒಬ್ಬ ಅಮಾಲೇಕ್ಯನ ಗುಲಾಮನು. ನಾನು ಮೂರು ದಿನಗಳ ಹಿಂದೆ ಅಸ್ವಸ್ಥನಾಗಿ ಮಲಗಿಕೊಂಡದ್ದರಿಂದ ನನ್ನ ಯಜಮಾನ ನನ್ನನ್ನು ಬಿಟ್ಟುಹೋದನು.</verse>
				<verse number="14">ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ನಾವು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು,” ಎಂದು ಉತ್ತರಕೊಟ್ಟನು.</verse>
				<verse number="15">ಅನಂತರ ದಾವೀದನು, “ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರೆದುಕೊಂಡು ಹೋಗುವಿಯಾ?” ಎಂದು ಕೇಳಿದ್ದಕ್ಕೆ ಅವನು, “ನೀನು ನನ್ನನ್ನು ಕೊಲ್ಲುವುದಿಲ್ಲವೆಂದೂ ನನ್ನ ಯಜಮಾನನ ಕೈಗೆ ಒಪ್ಪಿಸುವುದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣಮಾಡಿದರೆ ನಿನ್ನನ್ನು, ಆ ಗುಂಪಿನವರ ಬಳಿಗೆ ಕರೆದುಕೊಂಡು ಹೋಗುವೆನು,” ಎಂದನು.</verse>
				<verse number="16">ಅವರು ಅಲ್ಲಿಗೆ ಹೋದಾಗ ಆ ದಾಳಿಕಾರರು ತಮಗೆ ಫಿಲಿಷ್ಟಿಯ ಹಾಗು ಯೆಹೂದ ಪ್ರಾಂತ್ಯಗಳಲ್ಲಿ ದೊರಕಿದ್ದ ದೊಡ್ಡಕೊಳ್ಳೆಯ ನಿಮಿತ್ತ ಸಂತೋಷಿಸಿ, ತಿಂದು, ಕುಡಿದು, ಕುಣಿದಾಡುತ್ತಾ ಅಲ್ಲಿನ ಬಯಲಿನಲ್ಲಿ ವ್ಯಾಪಿಸಿಕೊಂಡಿದ್ದರು.</verse>
				<verse number="17">ದಾವೀದನು ಮರುದಿನ ನಸುಕಿನಲ್ಲೇ ಅವರ ಮೇಲೆ ದಾಳಿಮಾಡಿ ಸೂರ್ಯ ಅಸ್ತವಾಗುವವರೆಗೂ ಅವರನ್ನು ಸದೆಬಡಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಯುವಕರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.</verse>
				<verse number="18">ದಾವೀದನು ತನ್ನ ಇಬ್ಬರು ಹೆಂಡತಿಯರನ್ನು ಹಾಗು ಅಮಾಲೇಕ್ಯರು ಒಯ್ದಿದ್ದ ಎಲ್ಲಾ ಕೊಳ್ಳೆಯನ್ನು ಬಿಡಿಸಿಕೊಂಡನು.</verse>
				<verse number="19">ಅಮಾಲೇಕ್ಯರು ಒಯ್ದಿದ್ದ ಚಿಕ್ಕ ದೊಡ್ಡ ಒಡವೆಗಳಾಗಲಿ, ಗಂಡು-ಹೆಣ್ಣು ಮಕ್ಕಳಾಗಲಿ ಒಂದನ್ನೂ ಬಿಡದೆ, ಎಲ್ಲವನ್ನೂ ತೆಗೆದುಕೊಂಡು ಬಂದನು.</verse>
				<verse number="20">ಇದಲ್ಲದೆ, ದಾವೀದನು ಶತ್ರುಗಳ ದನಕುರಿಗಳನ್ನೂ ತೆಗೆದುಕೊಂಡನು. ಅವನ ಜನರು, “ಇವು ದಾವೀದನ ಕೊಳ್ಳೆ,” ಎಂದು ಹೇಳಿ ಅವುಗಳನ್ನು ತಮ್ಮ ದನಗಳ ಸಮೇತ ಹೊಡೆದುಕೊಂಡು ಬಂದರು.</verse>
				<verse number="21">ಅನಂತರ ದಾವೀದನು ಮೊದಲು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಉಳಿದಿದ್ದ ಇನ್ನೂರು ಜನರ ಬಳಿಗೆ ಹೋದನು. ಅವನನ್ನೂ ಅವನೊಂದಿಗಿದ್ದ ಜನರನ್ನೂ ಎದುರುಗೊಳ್ಳಲು ಆ ಜನರು ಬಂದರು. ದಾವೀದನು ಅವರನ್ನು ಸಂಧಿಸಿ ಕ್ಷೇಮಸಮಾಚಾರವನ್ನು ವಿಚಾರಿಸಿದನು.</verse>
				<verse number="22">ಆಗ ದಾವೀದನ ಜೊತೆಯಲ್ಲಿ ಹೋಗಿದ್ದ ಜನರಲ್ಲಿ ದುಷ್ಟರೂ ಮೂರ್ಖರೂ ಆದ ಕೆಲವು ಮಂದಿ, “ಇವರು ನಮ್ಮ ಸಂಗಡ ಬಾರದ್ದರಿಂದ ನಾವು ಬಿಡಿಸಿಕೊಂಡು ಬಂದ ಕೊಳ್ಳೆಯಲ್ಲಿ ಇವರಿಗೆ ಏನೂ ಸಿಕ್ಕುವುದಿಲ್ಲ. ತಮ್ಮ ತಮ್ಮ ಮಡದಿ ಮಕ್ಕಳನ್ನು ಕರೆದುಕೊಂಡು ಹೋಗಿಬಿಡಲಿ,” ಎಂದರು.</verse>
				<verse number="23">ಆಗ ದಾವೀದನು ಅವರಿಗೆ, “ಸಹೋದರರೇ, ಸರ್ವೇಶ್ವರ ನಮ್ಮನ್ನು ಕಾಪಾಡಿ, ನಮಗೆ ವಿರುದ್ಧ ಬಂದಿದ್ದ ಶತ್ರುಗಳ ಗುಂಪನ್ನು ನಮ್ಮ ಕೈಗೆ ಒಪ್ಪಿಸಿ, ನಮಗೆ ಇಷ್ಟನ್ನೆಲ್ಲಾ ಅನುಗ್ರಹಿಸಿದ ಮೇಲೆ ನೀವು ಹೀಗೆ ಮಾಡಬಾರದು.</verse>
				<verse number="24">ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರೂ ಕೇಳಬಾರದು. ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಧನಸಾಮಗ್ರಿಗಳನ್ನು ಕಾಯ್ದವನಿಗೂ ಸಿಕ್ಕಬೇಕು. ಉಭಯತ್ರರಿಗೂ ಸಮಪಾಲಾಗಬೇಕು,” ಎಂದು ಉತ್ತರಕೊಟ್ಟನು.</verse>
				<verse number="25">ದಾವೀದನು ಇಸ್ರಯೇಲರಲ್ಲಿ ಇದನ್ನು ಒಂದು ಕಟ್ಟಳೆಯನ್ನಾಗಿ ಅಂದು ವಿಧಿಸಿದ್ದರಿಂದ ಇಂದಿನವರೆಗೂ ಹಾಗೆಯೇ ನಡೆಯುತ್ತಾ ಬಂದಿದೆ.</verse>
				<verse number="26">ದಾವೀದನು ಚಿಕ್ಲಗಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದ ಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿದನು. “ಇಗೋ, ಸರ್ವೇಶ್ವರ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ,” ಎಂದು ಹೇಳಿದನು.</verse>
				<verse number="27">ಹೀಗೆ ಬಹುಮಾನ ಪಡೆದವರು ಇವರು: ಬೇತೇಲಿನವರು, ದಕ್ಷಿಣ ಪ್ರಾಂತ್ಯದ ರಾಮೋತಿನವರು, ಯತ್ತೀರಿನವರು,</verse>
				<verse number="28">ಅರೋಯೇರಿನವರು, ಸಿಪ್ಮೋತಿನವರು, ಎಷ್ಟೆಮೋವದವರು,</verse>
				<verse number="29">ರಾಕಾಲಿನವರು, ಎರಹ್ಮೇಲ್ಯರು, ಕೇನ್ಯರು,</verse>
				<verse number="30">ಹೊರ್ಮದವರು, ಬೋರಾಷಾನಿನವರು, ಅತಾಕಿನವರು, ಹೆಬ್ರೋನಿನವರು</verse>
				<verse number="31">ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳಗಳವರು.</verse>
			</chapter>
			<chapter number="31">
				<verse number="1">ಫಿಲಿಷ್ಟಿಯರು ಇಸ್ರಯೇಲರೊಡನೆ ಯುದ್ಧಮಾಡಿದರು. ಇಸ್ರಯೇಲರು ಅವರಿಂದ ಅಪಜಯಹೊಂದಿ ಗಿಲ್ಬೋವ ಬೆಟ್ಟದಲ್ಲಿ ಹತರಾದರು.</verse>
				<verse number="2">ಫಿಲಿಷ್ಟಿಯರು ಸೌಲನನ್ನೂ ಅವನ ಮಕ್ಕಳನ್ನೂ ಬಿಡದೆ ಹಿಂದಟ್ಟಿ ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದರು.</verse>
				<verse number="3">ಸೌಲನಿದ್ದ ಕಡೆಯಲ್ಲಿ ಯುದ್ಧವು ಬಹುಘೋರವಾಗಿತ್ತು. ಬಿಲ್ಲುಗಾರರು ಅವನಿಗೆ ಗುರಿಯಿಟ್ಟರು.</verse>
				<verse number="4">ಆದುದರಿಂದ ಸೌಲನು ಭಯಭೀತನಾಗಿ ತನ್ನ ಆಯುಧವಾಹಕನಿಗೆ, “ನಿನ್ನ ಕತ್ತಿಯನ್ನು ಹಿರಿದು ನನ್ನನ್ನು ತಿವಿದು ಕೊಲ್ಲು; ಇಲ್ಲವಾದರೆ ಸುನ್ನತಿಯಿಲ್ಲದ ಈ ಜನರು ಬಂದು ನನ್ನನ್ನು ತಿವಿದು ಅಪಕೀರ್ತಿಯನ್ನುಂಟುಮಾಡಬಹುದು,” ಎಂದು ಹೇಳಿದನು. ವಾಹಕನು ಹೆದರಿ, “ಒಲ್ಲೆ” ಎಂದನು. ಆದುದರಿಂದ ಸೌಲನು ತಾನೇ ಕತ್ತಿಯನ್ನು ಹಿರಿದು ಅದರ ಮೇಲೆ ಬಿದ್ದನು.</verse>
				<verse number="5">ಸೌಲನು ಸತ್ತದ್ದನ್ನು ಅವನ ಆಯುಧವಾಹಕನು ಕಂಡು ತಾನೂ ಕತ್ತಿಯ ಮೇಲೆ ಬಿದ್ದು ಅಲ್ಲಿಯೇ ಸತ್ತನು.</verse>
				<verse number="6">ಹೀಗೆ ಸೌಲನೂ ಅವನ ಮೂರು ಮಂದಿ ಮಕ್ಕಳೂ ಅವನ ಆಯುಧವಾಹಕನೂ ಎಲ್ಲ ಆಳುಗಳೂ ಅದೇ ದಿವಸ ಸತ್ತರು.</verse>
				<verse number="7">ಇಸ್ರಯೇಲ್ ಯೋಧರು ಸೋತರು; ಸೌಲನೂ ಅವನ ಮಕ್ಕಳೂ ಸತ್ತರು ಎಂಬ ಸಮಾಚಾರವನ್ನು ಕಣಿವೆಯ ಆಚೆಯಲ್ಲೂ ಜೋರ್ಡನಿನ ಆಚೆಯಲ್ಲೂ ವಾಸವಾಗಿದ್ದ ಇಸ್ರಯೇಲರು ಕೇಳಿ ತಮ್ಮ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.</verse>
				<verse number="8">ಮರುದಿನ ಬೆಳಿಗ್ಗೆ ಫಿಲಿಷ್ಟಿಯರು ಸತ್ತವರ ಒಡವೆಗಳನ್ನು ಸುಲಿದುಕೊಳ್ಳುವುದಕ್ಕೆ ಬಂದಾಗ ಸೌಲನೂ ಅವನ ಮೂರು ಮಂದಿ ಮಕ್ಕಳೂ ಗಿಲ್ಬೋವ ಬೆಟ್ಟದಲ್ಲಿ ಸತ್ತು ಬಿದ್ದಿರುವುದನ್ನು ಕಂಡರು.</verse>
				<verse number="9">ಸೌಲನ ತಲೆಯನ್ನು ಕಡಿದು, ಅವನ ಆಯುಧಗಳನ್ನು ತೆಗೆದುಕೊಂಡು, ಅವುಗಳನ್ನು ತಮ್ಮ ದೇಶದ ಎಲ್ಲಾ ಕಡೆಗೂ ಕಳುಹಿಸಿದರು. ತಮ್ಮ ಎಲ್ಲಾ ಜನರಿಗೂ ದೇವಸ್ಥಾನಗಳಿಗೂ ವಿಜಯವಾರ್ತೆಯನ್ನು ಮುಟ್ಟಿಸಿದರು.</verse>
				<verse number="10">ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಗುಡಿಯಲ್ಲಿಟ್ಟರು. ಅವನ ಶವವನ್ನು ಬೇತ್ ಷೆಯಾನಿನ ಕೋಟೆ ಗೋಡೆಗೆ ನೇತುಹಾಕಿದರು.</verse>
				<verse number="11">ಫಿಲಿಷ್ಟಿಯರು ಸೌಲನಿಗೆ ಏನೇನು ಮಾಡಿದರೆಂಬ ವರದಿ ಯಾಬಿಷ್ ಗಿಲ್ಯಾದಿನವರಿಗೆ ಮುಟ್ಟಿತು.</verse>
				<verse number="12">ಆಗ ಅವರಲ್ಲಿದ್ದ ಶೂರರೆಲ್ಲರೂ ಹೊರಟು, ರಾತ್ರಿಯೆಲ್ಲಾ ನಡೆದುಹೋಗಿ, ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ ಷೆಯಾನಿನ ಗೋಡೆಯಿಂದ ಇಳಿಸಿ, ಯಾಬೇಷಿಗೆ ತೆಗೆದುಕೊಂಡು ಬಂದು, ಅಲ್ಲಿ ಅವುಗಳನ್ನು ದಹಿಸಿದರು.</verse>
				<verse number="13">ಅವರ ಎಲುಬುಗಳನ್ನು ಯಾಬೇಷಿನಲ್ಲಿದ್ದ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿವಸ ಉಪವಾಸವನ್ನು ಆಚರಿಸಿದರು.</verse>
			</chapter>
		</book>
		<book number="10">
			<chapter number="1">
				<verse number="1">ಸೌಲನು ಸತ್ತನಂತರ ಸಂಭವಿಸಿದ ಘಟನೆಗಳು: ದಾವೀದನು ಅಮಾಲೇಕ್ಯರನ್ನು ಸದೆಬಡಿದು ಬಂದು ಚಿಕ್ಲಗಿನಲ್ಲಿ ಎರಡು ದಿವಸ ತಂಗಿದ್ದನು.</verse>
				<verse number="2">ಮೂರನೆಯ ದಿನ ಸೌಲನ ಪಾಳೆಯದಿಂದ ಒಬ್ಬ ವ್ಯಕ್ತಿ ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೂ ಬಾಗಿ ನಮಸ್ಕರಿಸಿದನು. ಅವನು ಸಂತಾಪದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.</verse>
				<verse number="3">ದಾವೀದನು ಅವನನ್ನು ನೋಡಿ, “ನೀನು ಎಲ್ಲಿಂದ ಬಂದೆ?” ಎಂದು ಕೇಳಿದನು. ಅವನು, “ನಾನು ಇಸ್ರಯೇಲರ ಪಾಳೆಯದಿಂದ ತಪ್ಪಿಸಿಕೊಂಡು ಬಂದೆ,” ಎಂದು ಉತ್ತರಕೊಟ್ಟನು.</verse>
				<verse number="4">ಆಗ ದಾವೀದನು, “ಏನಾಯಿತೆಂದು ತಿಳಿಸು,” ಎನ್ನಲು ಆ ವ್ಯಕ್ತಿ, “ಇಸ್ರಯೇಲರು ರಣರಂಗದಿಂದ ಓಡಿಹೋದರು; ಅನೇಕರು ಮಡಿದರು. ಸೌಲನೂ ಅವನ ಮಗ ಯೋನಾತಾನನೂ ಮರಣಹೊಂದಿದರು,” ಎಂದು ತಿಳಿಸಿದನು.</verse>
				<verse number="5">ದಾವೀದನು ಈ ವರ್ತಮಾನ ತಂದ ಯುವಕನಿಗೆ, “ಸೌಲನೂ ಅವನ ಮಗ ಯೋನಾತಾನನೂ ಸತ್ತಿರುವುದು ನಿನಗೆ ಹೇಗೆ ಗೊತ್ತಾಯಿತು?” ಎಂದು ಪ್ರಶ್ನಿಸಿದನು.</verse>
				<verse number="6">ಅವನು, “ನಾನು ಅಕಸ್ಮಾತ್ತಾಗಿ ಗಿಲ್ಬೋವ ಪರ್ವತಪ್ರದೇಶಕ್ಕೆ ಹೋದಾಗ ಸೌಲ ತಮ್ಮ ಭರ್ಜಿಯನ್ನೂರಿಕೊಂಡು ನಿಂತಿದ್ದರು. ರಥಿಕರೂ ರಾಹುತರೂ ಅವರನ್ನು ಹಿಂದಟ್ಟಿಬರುತ್ತಿರುವುದನ್ನೂ ಕಂಡೆ.</verse>
				<verse number="7">ಸೌಲ ಹಿಂದಿರುಗಿ ನನ್ನನ್ನು ಕರೆದರು.</verse>
				<verse number="8">ನಾನು, “ಇಗೋ ಬಂದೆ,” ಎಂದು ಹೇಳಿ ಹತ್ತಿರಕ್ಕೆ ಹೋದಾಗ ಅವರು, “ನೀನಾರು?” ಎಂದು ಕೇಳಿದ್ದಕ್ಕೆ, ‘ನಾನು ಒಬ್ಬ ಅಮಾಲೇಕ್ಯ’ ಎಂದು ಉತ್ತರಕೊಟ್ಟೆ.</verse>
				<verse number="9">ಆಗ ಅವರು, “ನೀನು ಮನಸ್ಸುಮಾಡಿ ಹತ್ತಿರ ಬಂದು ನನ್ನನ್ನು ಕೊಂದುಹಾಕು; ಏಕೆಂದರೆ, ನನ್ನಲ್ಲಿ ಇನ್ನೂ ಪೂರ್ಣಶಕ್ತಿಯಿದ್ದರೂ ಪ್ರಾಣಸಂಕಟಕ್ಕೆ ಸಿಕ್ಕಿಕೊಂಡಿದ್ದೇನೆ,” ಎಂದು ಹೇಳಿದರು.</verse>
				<verse number="10">ಅವರು ಕೆಳಕ್ಕೆ ಬಿದ್ದುಬಿಟ್ಟರೆ ಬದುಕಲಾರರೆಂದು ನೆನೆಸಿ ನಾನು ಅವರನ್ನು ಸಮೀಪಿಸಿ ಕೊಂದುಹಾಕಿದೆ. ಅವರ ತಲೆಯ ಮೇಲಿನ ಕಿರೀಟವನ್ನೂ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು ನನ್ನ ಒಡೆಯರಾದ ತಮ್ಮ ಬಳಿಗೆ ತಂದಿದ್ದೇನೆ,” ಎಂದನು.</verse>
				<verse number="11">ಸೌಲನು, ಅವನ ಮಗ ಯೋನಾತಾನನು ಹಾಗೂ ಸರ್ವೇಶ್ವರನ ಪ್ರಜೆಗಳಾದ ಇಸ್ರಯೇಲರು ಕತ್ತಿಯಿಂದ ಮೃತರಾದದ್ದಕ್ಕಾಗಿ</verse>
				<verse number="12">ದಾವೀದನೂ ಅವನ ಜನರೂ ದುಃಖದಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಗೋಳಾಡಿದರು. ಸಾಯಂಕಾಲದವರೆಗೆ ಉಪವಾಸಮಾಡಿದರು.</verse>
				<verse number="13">ದಾವೀದನು ವರ್ತಮಾನ ತಂದ ಆ ಯುವಕನನ್ನು, “ನೀನೆಲ್ಲಿಯವನು?” ಎಂದು ಕೇಳಿದ್ದಕ್ಕೆ ಅವನು, “ನಾನು ಇಸ್ರಯೇಲರಲ್ಲಿ ಪ್ರವಾಸಿಯಾಗಿರುವ ಒಬ್ಬ ಅಮಾಲೇಕ್ಯನು,” ಎಂದು ಉತ್ತರಕೊಟ್ಟನು.</verse>
				<verse number="14">ದಾವೀದನು, “ಕೈಯೆತ್ತಿ ಸರ್ವೇಶ್ವರನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ನೀನು ಹಿಂಜರಿಯಲಿಲ್ಲ ಏಕೆ?” ಎಂದು ಹೇಳಿ</verse>
				<verse number="15">ತನ್ನ ಆಳುಗಳಲ್ಲಿ ಒಬ್ಬನನ್ನು ಕರೆದು, “ಇವನನ್ನು ಕೊಲ್ಲು,” ಎಂದು ಆಜ್ಞಾಪಿಸಿದನು. ಅವನು ಇವನನ್ನು ಹೊಡೆದು ಕೊಂದನು.</verse>
				<verse number="16">ದಾವೀದನು, “ಈ ರಕ್ತಾಪರಾಧ ನಿನ್ನ ತಲೆಯ ಮೇಲೆಯೇ ಇರಲಿ; ‘ಸರ್ವೇಶ್ವರನ ಅಭಿಷಿಕ್ತನನ್ನು ಕೊಂದುಹಾಕಿದೆ’ ಎಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿಹೇಳಿತು,” ಎಂದನು.</verse>
				<verse number="17">ದಾವೀದನು ಸೌಲ-ಯೋನಾತಾನರ ಮೇಲೆ ಒಂದು ಶೋಕಗೀತೆಯನ್ನು ರಚಿಸಿದನು.</verse>
				<verse number="18">‘ಬಿಲ್ಲೆ’ ಎಂಬ ಈ ಗೀತೆಯನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಆಜ್ಞಾಪಿಸಿದನು. ಇದರ ಉಲ್ಲೇಖ ‘ಯಾಷಾರ್’ ಎಂಬ ಗ್ರಂಥದಲ್ಲಿದೆ:</verse>
				<verse number="19">ಮಣ್ಣುಪಾಲಾಗಿದೆ, ಓ ಇಸ್ರಯೇಲರೇ, ನಿಮ್ಮ ವೈಭವ ಆ ಗುಡ್ಡಗಳ ಮೇಲೆ ನೀವು ಮಡಿದದ್ದು ಹೇಗೆ, ಓ ಯುದ್ಧವೀರರೇ?</verse>
				<verse number="20">ಸಾರಬೇಡಿ ಈ ಸುದ್ದಿಯನು ‘ಗತ್’ ಊರಿನಲಿ ಘೋಷಿಸಬೇಡಿ ಅಷ್ಕೆಲೋನಿನ ಬೀದಿಗಳಲಿ. ಏಕೆನೆ, ಉಲ್ಲಾಸಿಸಿಯಾರು ಆ ಫಿಲಿಷ್ಟಿಯ ಮಹಿಳೆಯರು; ಜಯಘೋಷ ಮಾಡಿಯಾರು ಸುನ್ನತಿಯಿಲ್ಲದವರಾ ಸ್ತ್ರೀಯರು!</verse>
				<verse number="21">ಮಳೆಯಾಗಲಿ, ಮಂಜಾಗಲಿ ಬೀಳದಿರಲಿ ಆ ಗಿಲ್ಬೋವ ಗುಡ್ಡಗಳ ಮೇಲೆ ಅದರ ಮೇಲಿನ ಹೊಲಗಳು ಬೆಳೆಕೊಡದಿರಲಿ ನೈವೇದ್ಯಕೆ. ಏಕೆನೆ ಅಲ್ಲಿ ಬಿದ್ದಿವೆ ಯುದ್ಧವೀರರ ಕತ್ತಿಗುರಾಣಿ ಅಭಿಷಿಕ್ತನಲ್ಲದವನ ಗುರಾಣಿಯಂತೆ ಆ ಸೌಲನ ಗುರಾಣಿ!</verse>
				<verse number="22">ಹಿಂದಿರುಗುತ್ತಿರಲಿಲ್ಲ ಸೌಲನಾಕತ್ತಿ ವ್ಯರ್ಥವಾಗಿ, ಬರುತ್ತಿರಲಿಲ್ಲ ಯೋನಾತಾನನಾ ಬಿಲ್ಲು ಬರಿದಾಗಿ, ಹತರಾದವರ ರಕುತವನು ಹೀರದೆ ಪರಾಕ್ರಮಿಗಳ ಕೊಬ್ಬನು ರುಚಿಸದೆ.</verse>
				<verse number="23">ಸೌಮ್ಯರು, ಅತಿಪ್ರಿಯರು, ಆ ಸೌಲ-ಯೋನಾತಾನರು ಬಾಳಿನಲು, ಸಾವಿನಲು ಬಿಟ್ಟಗಲದವರು. ಹದ್ದಿಗಿಂತ ಅಧಿಕ ವೇಗ ಅವರದು ಸಿಂಹಕ್ಕಿಂತ ಹೆಚ್ಚಿನ ಶಕ್ತಿ ಅವರದು!</verse>
				<verse number="24">ಸೌಲನಿಗಾಗಿ ಅತ್ತು ಪ್ರಲಾಪಿಸಿರಿ ಇಸ್ರಯೇಲಿನ ಮಹಿಳೆಯರೇ, ಉಲ್ಲಾಸಕರ ರಕ್ತಾಂಬರಗಳ ಉಡಿಸಿದವನು ಅವನೇ ಅಲ್ಲವೆ ನಿಮಗೆ? ಅವುಗಳ ಮೇಲೆ ಸುವರ್ಣಾಂಬರಗಳ ತೊಡಿಸಿದವನು ಆತನೇ ಅಲ್ಲವೆ ನಿಮಗೆ?</verse>
				<verse number="25">ಯುದ್ಧವೀರರೇ, ಹೇಗೆ ಮಡಿದುಹೋದಿರಿ ರಣರಂಗದಲಿ? ಯೋನಾತಾನನು ಹತನಾಗಿ ಬಿದ್ದಿಹನಲ್ಲಾ ಬೆಟ್ಟಗುಡ್ಡದಲಿ!</verse>
				<verse number="26">ಯೋನಾತಾನನೇ, ಸಹೋದರನೇ, ಮನೋಹರನೇ, ನಿನ್ನ ಮರಣ ತಂದಿದೆ ಅತೀವ ಸಂಕಟ ನನಗೆ, ನನ್ನ ಮೇಲೆ ನಿನಗಿದ್ದ ಪ್ರೀತಿ ಅದೆಷ್ಟು ಆಶ್ಚರ್ಯಕರ! ಸತಿಪ್ರೇಮಕ್ಕಿಂತಲೂ ಅದು ಅಮೋಘಕರ!</verse>
				<verse number="27">ಅಯ್ಯೋ, ಆ ಪರಾಕ್ರಮಶಾಲಿಗಳು ಹೇಗೆ ಹತರಾದರು! ಯುದ್ಧಾಯುಧಗಳು ಹೇಗೆ ಹಾಳಾದವು!</verse>
			</chapter>
			<chapter number="2">
				<verse number="1">ಅನಂತರ ದಾವೀದನು ಸರ್ವೇಶ್ವರನನ್ನು, “ನಾನು ಜುದೇಯ ನಾಡಿನ ಯಾವುದಾದರೊಂದು ಪಟ್ಟಣಕ್ಕೆ ಹೋಗಬಹುದೇ?” ಎಂದು ಕೇಳಿದನು. “ಹೋಗಬಹುದು” ಎಂದರು ಸರ್ವೇಶ್ವರ. ಅವನು ಪುನಃ, “ಯಾವ ಊರಿಗೆ ಹೋಗಲಿ?” ಎಂದು ಕೇಳಿದ್ದಕ್ಕೆ, “ಹೆಬ್ರೋನಿಗೆ ಹೋಗು,” ಎಂಬ ಉತ್ತರ ಸಿಕ್ಕಿತು.</verse>
				<verse number="2">ಆಗ ದಾವೀದನು ತನ್ನ ಇಬ್ಬರು ಹೆಂಡತಿಯರಾದ ಜೆಸ್ರೀಲಿನ ಅಹೀನೋವಮಳನ್ನು ಮತ್ತು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳನ್ನೂ ಕರೆದುಕೊಂಡು ಅಲ್ಲಿಗೆ ಹೋದನು.</verse>
				<verse number="3">ದಾವೀದನ ಜನರೂ ತಮ್ಮ ತಮ್ಮ ಕುಟುಂಬಗಳನ್ನು ಕರೆದುಕೊಂಡು ಅವನ ಜೊತೆಯಲ್ಲಿ ಹೋಗಿ ಹೆಬ್ರೋನಿಗೆ ಸೇರಿದ ಊರುಗಳಲ್ಲಿ ವಾಸಿಸಿದರು.</verse>
				<verse number="4">ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದಿನವರೇ ಎಂಬ ಸಂಗತಿ ದಾವೀದನಿಗೆ ತಿಳಿಯಿತು.</verse>
				<verse number="5">ಆಗ ಅವನು ಅವರ ಬಳಿಗೆ ದೂತರನ್ನು ಕಳುಹಿಸಿ, “ನೀವು ರಾಜನಿಷ್ಠೆಯಿಂದ ನಿಮ್ಮ ಒಡೆಯ ಸೌಲನ ಶವವನ್ನು ಸಮಾಧಿಮಾಡಿದ್ದಕ್ಕಾಗಿ ಸರ್ವೇಶ್ವರನ ಆಶೀರ್ವಾದ ನಿಮಗೆ ಲಭಿಸಲಿ!</verse>
				<verse number="6">ಅವರ ಅಚಲ ಪ್ರೀತಿಸತ್ಯತೆಗಳು ನಿಮ್ಮೊಂದಿಗಿರಲಿ! ಈ ಸತ್ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರ ಮಾಡುವೆನು.</verse>
				<verse number="7">ಯೆಹೂದ್ಯರು ನನ್ನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡಿದ್ದಾರೆ. ಆದುದರಿಂದ ಸೌಲನು ಸತ್ತುಹೋಗಿದ್ದರೂ ನೀವು ಶೂರರಾಗಿರಿ; ನಿಮ್ಮ ಕೈಗಳು ಜೋಲುಬೀಳದಿರಲಿ,” ಎಂದು ಹೇಳಿಸಿದನು.</verse>
				<verse number="8">ಸೌಲನ ಸೇನಾಪತಿ ಹಾಗು ನೇರನ ಮಗನಾದ ಅಬ್ನೇರನು ಸೌಲನ ಮಗನಾದ ಈಷ್ಬೋಶೆತನನ್ನು ನದಿಯ ಆಚೆಯಲ್ಲಿರುವ ಮಹನಯಿಮಿಗೆ ಕರೆದೊಯ್ದನು.</verse>
				<verse number="9">ಗಿಲ್ಯಾದ್, ಆಶೇರ್, ಜೆಸ್ರೀಲ್, ಎಫ್ರಯಿಮ್, ಬೆನ್ಯಾಮೀನ್ ಇವುಗಳ ಜನರ ಮೇಲೆ ಮತ್ತು ಬೇರೆ ಎಲ್ಲ ಇಸ್ರಯೇಲರ ಮೇಲೆ ಅವನನ್ನು ಅರಸನನ್ನಾಗಿ ಮಾಡಿದನು.</verse>
				<verse number="10">(ಸೌಲನ ಮಗನಾದ ಈಷ್ಬೋಶೆತನಿಗೆ ಆಗ ನಾಲ್ವತ್ತು ವರ್ಷ. ಇಸ್ರಯೇಲರನ್ನು ಆತ ಎರಡು ವರ್ಷ ಆಳಿದನು).ಯೆಹೂದ್ಯರು ಮಾತ್ರ ದಾವೀದನನ್ನೇ ಹಿಂಬಾಲಿಸಿದರು.</verse>
				<verse number="11">ದಾವೀದನು ಹೆಬ್ರೋನಿನಲ್ಲಿ ಯೆಹೂದ್ಯರ ಅರಸನಾಗಿ ಏಳು ವರ್ಷ ಆರು ತಿಂಗಳು ರಾಜ್ಯವಾಳಿದನು.</verse>
				<verse number="12">ಒಂದು ದಿನ ನೇರನ ಮಗ ಅಬ್ನೇರನು ಮತ್ತು ಸೌಲನ ಮಗ ಈಷ್ಬೋಶೆತನ ಸೇವಕರು ಮಹನಯಿಮಿನಿಂದ ಹೊರಟು ಗಿಬ್ಯೋನಿಗೆ ಬಂದರು.</verse>
				<verse number="13">ಚೆರೂಯಳ ಮಗ ಯೋವಾಬನು ಮತ್ತು ದಾವೀದನ ಸೇವಕರು ಹೊರಟು ಅವರನ್ನು ಗಿಬ್ಯೋನಿನ ಕೆರೆಯ ಹತ್ತಿರ ಸಂಧಿಸಿದರು. ಇವರು ಕೆರೆಯ ಈಚೆ, ಅವರು ಕೆರೆಯ ಆಚೆ ಕುಳಿತುಕೊಂಡರು.</verse>
				<verse number="14">ಆಗ ಅಬ್ನೇರನು ಯೋವಾಬನಿಗೆ, “ಎರಡು ಕಡೆಯ ತರುಣರು ಎದ್ದುಬಂದು ನಮ್ಮ ಮುಂದೆ ದ್ವಂದ್ವಯುದ್ಧ ಮಾಡಲಿ,” ಎಂದು ಹೇಳಿದನು. ಯೋವಾಬನು ಅದಕ್ಕೆ ಒಪ್ಪಿಕೊಂಡನು.</verse>
				<verse number="15">ಆಗ ಸೌಲನ ಮಗ ಈಷ್ಬೋಶೆತನ ಕಡೆಯವರಾದ ಹನ್ನೆರಡು ಮಂದಿ ಬೆನ್ಯಾಮೀನ್ಯರು, ಮತ್ತು ದಾವೀದನ ಸೇವಕರಲ್ಲಿ ಹನ್ನೆರಡು ಮಂದಿ ಸಮಸಂಖ್ಯೆಯಾಗಿ ಹೊರಟು ದ್ವಂದ್ವಯುದ್ಧ ಮಾಡಿದರು.</verse>
				<verse number="16">ಅವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಎದುರಾಳಿಯ ತಲೆ ಹಿಡಿದು ಕತ್ತಿಯಿಂದ ಪಕ್ಕೆಯನ್ನು ತಿವಿದುದರಿಂದ ಎಲ್ಲರೂ ಸತ್ತುಬಿದ್ದರು. ಆದುದರಿಂದ ಗಿಬ್ಯೋನಿನಲ್ಲಿರುವ ಆ ಸ್ಥಳಕ್ಕೆ ‘ಹದಗತ್ತಿ ಕ್ಷೇತ್ರ’ ಎಂದು ಹೆಸರಾಯಿತು.</verse>
				<verse number="17">ಅನಂತರ ಆ ದಿವಸ ಘೋರಯುದ್ಧ ನಡೆಯಿತು. ಅಬ್ನೇರನನ್ನೂ ಇಸ್ರಯೇಲರನ್ನೂ ದಾವೀದನ ಸೇವಕರು ಸೋಲಿಸಿದರು.</verse>
				<verse number="18">ಚೆರೂಯಳ ಮೂರು ಮಂದಿ ಮಕ್ಕಳಾದ ಯೋವಾಬ್, ಅಬೀಷೈ, ಅಸಾಹೇಲ್ ಎಂಬುವರು ಅಲ್ಲಿಗೆ ಬಂದಿದ್ದರು. ಅಸಾಹೇಲನು ಅಡವಿಯ ಜಿಂಕೆಯಂತೆ ಚುರುಕು ಕಾಲಿನವನಾಗಿದ್ದನು.</verse>
				<verse number="19">ಇವನು ಎಡಕ್ಕಾದರೂ ಬಲಕ್ಕಾದರೂ ತಿರುಗದೆ ಅಬ್ನೇರನನ್ನು ಹಿಂದಟ್ಟಿದನು.</verse>
				<verse number="20">ಅಬ್ನೇರನು ಹಿಂದಿರುಗಿ ನೋಡಿ, “ನೀನು ಅಸಾಹೇಲನೋ?’ ಎಂದು ಕೇಳಿದ್ದಕ್ಕೆ ಅವನು, “ಹೌದು” ಎಂದು ಉತ್ತರಕೊಟ್ಟನು.</verse>
				<verse number="21">ಆಗ ಅಬ್ನೇರನು, “ನನ್ನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಂಡು ಯುವಕರಲ್ಲೊಬ್ಬನನ್ನು ಹಿಡಿದು, ಸುಲಿದುಕೋ,” ಎಂದು ಹೇಳಿದನು. ಆದರೆ ಅಸಾಹೇಲನು ಒಪ್ಪಲಿಲ್ಲ.</verse>
				<verse number="22">ಮತ್ತೊಮ್ಮೆ ಅಬ್ನೇರನು, “ನನ್ನನ್ನು ಬಿಟ್ಟುಹೋಗು; ನಿನ್ನನ್ನು ಕೊಲ್ಲಲು ನನ್ನನ್ನೇಕೆ ಒತ್ತಾಯಿಸುವೆ? ಹಾಗೆ ಕೊಂದರೆ ನಿನ್ನ ಅಣ್ಣನಾದ ಯೋವಾಬನಿಗೆ ಹೇಗೆ ತಾನೆ ಮುಖ ತೋರಿಸಲಿ,” ಎಂದನು.</verse>
				<verse number="23">ಆದರೂ ಅಸಾಹೇಲನು ಬಿಟ್ಟುಹೋಗುವುದಕ್ಕೆ ಒಪ್ಪಲಿಲ್ಲ. ಆದಕಾರಣ ಅಬ್ನೇರನು ಭರ್ಜಿಯನ್ನು ಹಿಮ್ಮುಖವಾಗಿ ಎಸೆದು ಅವನ ಹೊಟ್ಟೆಯನ್ನು ತಿವಿದನು. ಆ ಭರ್ಜಿ ಅವನ ಬೆನ್ನಿನಿಂದ ಹಾಯ್ದು ಬಂದಿತು. ಅವನು ಕೂಡಲೇ ಅಲ್ಲೇ ಬಿದ್ದು ಸತ್ತನು. ಅಸಾಹೇಲನು ಸತ್ತುಬಿದ್ದ ಸ್ಥಳಕ್ಕೆ ಬಂದವರೆಲ್ಲರೂ ಅಲ್ಲೇ ನಿಂತರು.</verse>
				<verse number="24">ಆದರೆ ಯೋವಾಬನೂ ಅಬೀಷೈಯೂ ಅಬ್ನೇರನನ್ನು ಹಿಂದಟ್ಟಿದರು. ಹೀಗೆ ಅವರು ‘ಅಮ್ಮಾ’ ಎಂಬ ಗುಡ್ಡಕ್ಕೆ ಬರುವಷ್ಟರಲ್ಲಿ ಸೂರ್ಯಾಸ್ತಮವಾಯಿತು. ಆ ಗುಡ್ಡ ಗಿಬ್ಯೋನ್ ಮರುಭೂಮಿ ಮಾರ್ಗದ ಬಳಿಯಲ್ಲಿರುವ ಗೀಯದ ಎದುರಿನಲ್ಲಿದೆ.</verse>
				<verse number="25">ಬೆನ್ಯಾಮೀನ್ಯರು ಒಂದೇ ಗುಂಪು ಆಗಿ ಕೂಡಿಕೊಂಡು ಅಬ್ನೇರನ ಬಳಿಗೆ ಬಂದು ಗುಡ್ಡದ ಮೇಲೆ ನಿಂತರು.</verse>
				<verse number="26">ಆಗ ಅಬ್ನೇರನು ಯೋವಾಬನನ್ನು ನೋಡಿ, “ಕತ್ತಿ ಯಾವಾಗಲೂ ತಿನ್ನುತ್ತಲೇ ಇರಬೇಕೇ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೇ? ಸಹೋದರರನ್ನು ಹಿಂದಟ್ಟುವುದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವೆ?” ಎಂದನು.</verse>
				<verse number="27">ಅದಕ್ಕೆ ಯೋವಾಬನು, “ದೇವರ ಜೀವದಾಣೆ, ಈಗ ನೀನು ಈ ಮಾತುಗಳನ್ನು ಹೇಳದಿದ್ದರೆ, ಜನರು ನಾಳೆ ಬೆಳಗಾಗುವವರೆಗೆ ತಮ್ಮ ದೇಶಬಾಂಧವರನ್ನು ಹಿಂದಟ್ಟದೆ ಬಿಡುತ್ತಿರಲಿಲ್ಲ,” ಎಂದು ಉತ್ತರಕೊಟ್ಟನು.</verse>
				<verse number="28">ಕೂಡಲೆ ತುತೂರಿಯನ್ನು ಊದಿಸಿದನು. ಆಗ ಜನರು ಇಸ್ರಯೆಲರನ್ನು ಹಿಂದಟ್ಟದೆ ಬಿಟ್ಟರು. ಯುದ್ಧವು ನಿಂತುಹೋಯಿತು.</verse>
				<verse number="29">ಅಬ್ನೇರನೂ ಅವನ ಜನರೂ ಅರಾಬಾ ಕಣಿವೆಯಲ್ಲಿ ರಾತ್ರಿಯೆಲ್ಲಾ ಪ್ರಯಾಣಮಾಡಿ ಜೋರ್ಡನ್ ನದಿದಾಟಿ ಬಿಥ್ರೋನ್ ಕಣಿವೆಯನ್ನು ಹಾಯ್ದು ಮಹನಯಿಮಿಗೆ ಸೇರಿದರು.</verse>
				<verse number="30">ಯೋವಾಬನು ಅಬ್ನೇರನನ್ನು ಬೆನ್ನಟ್ಟದೆ ಹಿಂದೆ ತಿರುಗಿ ಬಂದು, ಜನರನ್ನು ಕೂಡಿಸಿ ಲೆಕ್ಕಿಸಿದಾಗ ಅವರಲ್ಲಿ ದಾವೀದನ ಹತ್ತೊಂಬತ್ತು ಮಂದಿ ಯೋಧರು ಮತ್ತು ಅಸಾಹೇಲನು ಇರಲಿಲ್ಲ.</verse>
				<verse number="31">ಆದರೆ ದಾವೀದನ ಯೋಧರು ಅಬ್ನೇರನ ಜನರಾದ ಬೆನ್ಯಾಮೀನ್ಯರಲ್ಲಿ ಮುನ್ನೂರರ್ವತ್ತು ಮಂದಿಯನ್ನು ಕೊಂದಿದ್ದರು.</verse>
				<verse number="32">ಅವರು ಅಸಾಹೇಲನ ಶವವನ್ನು ತಂದು ಅದನ್ನು ಬೆತ್ಲೆಹೇಮಿನಲ್ಲಿರುವ ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಯೋವಾಬನೂ ಅವನ ಜನರೂ ರಾತ್ರಿಯೆಲ್ಲಾ ಪ್ರಯಾಣಮಾಡಿ ಹೆಬ್ರೋನಿಗೆ ಬಂದರು. ಆಗ ಸೂರ್ಯೋದಯವಾಗಿತ್ತು.</verse>
			</chapter>
			<chapter number="3">
				<verse number="1">ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಬಹುದಿನಗಳವರೆಗೆ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶ ದುರ್ಬಲವಾಗುತ್ತಾ ಬಂದಿತು.</verse>
				<verse number="2">ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು ಆರು: ಚೊಚ್ಚಲ ಮಗ ಅಮ್ನೋನನು; ಇವನು ಜೆಸ್ರೀಲಿನವಳಾದ ಅಹೀನೋವಮಳ ಮಗ.</verse>
				<verse number="3">ಎರಡನೆಯವನು ಕಿಲಾಬನು; ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳ ಮಗ. ಮೂರನೆಯವನು ಅಬ್ಷಾಲೋಮನು; ಇವನು ಗೆಷೂರಿನ ಅರಸನಾದ ತಲ್ಮೈ ಎಂಬವನ ಮಗಳಾದ ಮಾಕಳ ಪುತ್ರ.</verse>
				<verse number="4">ನಾಲ್ಕನೆಯವನು ಅದೋನೀಯನು; ಇವನು ಹಗ್ಗೀತಳ ಮಗ.</verse>
				<verse number="5">ಐದನೆಯವನು ಶೆಫಟ್ಯನು, ಇವನು ಅಬೀಟಲಳ ಮಗನು; ಆರನೆಯವನು ಇತ್ರಾಮನು. ಇವನು ದಾವೀದನ ಹೆಂಡತಿ ಆದ ಎಗ್ಲಳ ಮಗ. ಹೆಬ್ರೋನಿನಲ್ಲಿರುವಾಗ ದಾವೀದನಿಗೆ ಹುಟ್ಟಿದ ಮಕ್ಕಳು ಇವರು.</verse>
				<verse number="6">ಸೌಲನ ಸೇನೆಗೂ ದಾವೀದನ ಸೇನೆಗೂ ಯುದ್ಧ ನಡೆಯುತ್ತಿದ್ದಾಗ ಸೌಲನ ವಂಶದವರಲ್ಲಿ ಅಬ್ನೇರನೇ ಪ್ರಬಲನಾಗಿದ್ದನು.</verse>
				<verse number="7">ಅಯಾಹನ ಮಗಳಾದ ರಿಚ್ಪಳು ಸೌಲನ ಉಪಪತ್ನಿಯಾಗಿದ್ದಳು. ಒಂದು ದಿನ ಈಷ್ಬೋಶೆತನು ಅಬ್ನೇರನನ್ನು, “ನೀನು ನನ್ನ ತಂದೆಯ ಉಪಪತ್ನಿಯನ್ನು ಕೂಡಿದ್ದೇಕೆ?” ಎಂದು ಕೇಳಿದನು.</verse>
				<verse number="8">ಅಬ್ನೇರನು ಈ ಮಾತನ್ನು ಕೇಳಿ ಕೋಪಗೊಂಡು ಈಷ್ಬೋಶೆತನಿಗೆ, “ಈವರೆಗೆ ನಾನು ನಿನ್ನ ತಂದೆ ಸೌಲನ ಕುಟುಂಬಕ್ಕೂ ಅವನ ಬಂಧುಮಿತ್ರರಿಗೂ ಪ್ರಾಮಾಣಿಕನಾಗಿ ನಡೆದುಕೊಂಡೆನಲ್ಲವೇ? ನಿನ್ನನ್ನು ದಾವೀದನ ಕೈಗೆ ಒಪ್ಪಿಸಿಕೊಡಲಿಲ್ಲ. ಆದರೂ ಈಗ ಈ ಹೆಂಗಸಿನ ಕಾರಣ ನನ್ನಲ್ಲಿ ತಪ್ಪುಹಿಡಿಯುವುದಕ್ಕೆ ನಾನೇನು ಯೆಹೂದ ನಾಯಿಯ ತಲೆಯೋ?</verse>
				<verse number="9">ಅರಸುತನವನ್ನು ಸೌಲನ ಕುಟುಂಬದಿಂದ ತೆಗೆದು ದಾನಿನಿಂದ ಬೇರ್ಷೆಬದವರೆಗಿರುವ ಎಲ್ಲ ಇಸ್ರಯೇಲರಲ್ಲೂ ಯೆಹೂದ್ಯರಲ್ಲೂ ದಾವೀದನ ಸಿಂಹಾಸನವನ್ನು ಸ್ಥಿರಪಡಿಸುವುದಾಗಿ ಸರ್ವೇಶ್ವರನಾದ ದೇವರು ದಾವೀದನಿಗೆ ವಾಗ್ದಾನ ಮಾಡಿದ್ದಾರೆ.</verse>
				<verse number="10">ಆ ವಾಗ್ದಾನವನ್ನು ನಾನು ನೆರವೇರಿಸದೆ ಹೋದರೆ ಅವರು ನನಗೆ ಏನುಬೇಕಾದರೂ ಮಾಡಲಿ,” ಎಂದನು.</verse>
				<verse number="11">ಈಷ್ಬೋಶೆತನು ಅವನಿಗೆ ಹೆದರಿ ಏನೂ ಉತ್ತರಕೊಡಲಾರದೆ ಹೋದನು.</verse>
				<verse number="12">ಅನಂತರ ಅಬ್ನೇರನು ದಾವೀದನ ಬಳಿಗೆ ದೂತರನ್ನು ಕಳುಹಿಸಿ, “ಈ ನಾಡು ಯಾರದು? ನೀನು ನನ್ನೊಡನೆ ಒಪ್ಪಂದ ಮಾಡಿಕೊಂಡರೆ ಇಸ್ರಯೇಲರನ್ನೆಲ್ಲಾ ನಿನ್ನ ಕಡೆಗೆ ತಿರುಗಿಸುವೆನು. ಹಾಗು ನನ್ನ ಬೆಂಬಲ ನಿನಗಿರುವುದು,” ಎಂದು ಹೇಳಿಸಿದನು.</verse>
				<verse number="13">ಅದಕ್ಕೆ ದಾವೀದನು, “ಒಳ್ಳೆಯದು, ನಿನ್ನ ಸಂಗಡ ಒಪ್ಪಂದಮಾಡಿಕೊಳ್ಳುತ್ತೇನೆ; ಆದರೆ ನೀನು ಒಂದು ಕಾರ್ಯವನ್ನು ಮಾಡಬೇಕು; ನನ್ನನ್ನು ನೋಡುವುದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರೆದುಕೊಂಡು ಬರಬೇಕು. ಹಾಗೆ ಕರೆದುಕೊಂಡು ಬಾರದಿದ್ದರೆ ನೀನು ನನ್ನ ಮುಖವನ್ನು ನೋಡಕೂಡದು,” ಎಂದು ಉತ್ತರಕೊಟ್ಟನು.</verse>
				<verse number="14">ಇದಲ್ಲದೆ, ದಾವೀದನು ಸೌಲನ ಮಗನಾದ ಈಷ್ಬೋಶೆತನ ಬಳಿಗೆ ದೂತರನ್ನು ಕಳುಹಿಸಿ, “ನಾನು ನೂರುಮಂದಿ ಫಿಲಿಷ್ಟಿಯರ ಮುಂದೊಗಲನ್ನು ತಂದುಕೊಟ್ಟು ವರಿಸಿದ ನನ್ನ ಹೆಂಡತಿಯಾದ ಮೀಕಲಳನ್ನು ನನಗೊಪ್ಪಿಸು,” ಎಂಬುದಾಗಿ ಆಜ್ಞಾಪಿಸಿದನು.</verse>
				<verse number="15">ಈಷ್ಬೋಶೆತನು ಲಯಿಷನ ಮಗನೂ ಆಕೆಯ ಗಂಡನೂ ಆದ ಪಲ್ಟೀಯೇಲನ ಮನೆಗೆ ಆಳುಗಳನ್ನು ಕಳುಹಿಸಿ ಆಕೆಯನ್ನು ಕರೆದು ತರಿಸಿದನು.</verse>
				<verse number="16">ಆಗ ಪಲ್ಟೀಯೇಲನು ಅಳುತ್ತಾ ಬಹುರೀಮಿನವರೆಗೆ ಆಕೆಯ ಹಿಂದೆ ಬಂದನು. ಅನಂತರ ಅಬ್ನೇರನು ಅವನಿಗೆ, “ಹಿಂದಿರುಗು, ನಡೆ,” ಎಂದು ಹೇಳಲು ಅವನು ಹಿಂದಿರುಗಿಹೋದನು.</verse>
				<verse number="17">ಅಬ್ನೇರನು ಇಸ್ರಯೆಲರ ಹಿರಿಯರಿಗೆ, “ದಾವೀದನು ನಮ್ಮ ಅರಸನಾಗಬೇಕೆಂದು ನೀವು ಬಹುದಿನದಿಂದ ಅಪೇಕ್ಷಿಸಿದಿರಿ. ಈಗ ಅವಕಾಶ ಒದಗಿದೆ.</verse>
				<verse number="18">ಸರ್ವೇಶ್ವರ ದಾವೀದನ ವಿಷಯವಾಗಿ, “ನನ್ನ ದಾಸ ದಾವೀದನ ಮುಖಾಂತರ ನನ್ನ ಪ್ರಜೆಗಳಾದ ಇಸ್ರಯೇಲರನ್ನು ಫಿಲಿಷ್ಟಿಯರ ಕೈಯಿಂದಲೂ ಬೇರೆ ಎಲ್ಲಾ ಶತ್ರುಗಳ ಕೈಯಿಂದಲೂ ತಪ್ಪಿಸುವೆನು,” ಎಂದು ನುಡಿದಿದ್ದಾರಲ್ಲವೇ? ಎಂದು ಹೇಳಿಸಿದನು.</verse>
				<verse number="19">ಅವನು ಬೆನ್ಯಾಮೀನ್ಯರಿಗೂ ಇದೇ ಪ್ರಕಾರ ಹೇಳಿದನು. ತರುವಾಯ ಅವನು, ಇಸ್ರಯೇಲರು ಹಾಗು ಬೆನ್ಯಾಮೀನ್ಯರು ಎಲ್ಲರು ಒಪ್ಪಿ ಹೇಳಿದ ಮಾತುಗಳನ್ನು ದಾವೀದನಿಗೆ ತಿಳಿಸುವುದಕ್ಕಾಗಿ ಹೆಬ್ರೋನಿಗೆ ಹೊರಟನು.</verse>
				<verse number="20">ಅವನು ಹೆಬ್ರೋನಿಗೆ ಬಂದಾಗ ದಾವೀದನು ಅವನಿಗೂ ಅವನ ಸಂಗಡ ಬಂದಿದ್ದ ಇಪ್ಪತ್ತು ಜನರಿಗೂ ಔತಣಮಾಡಿಸಿದನು.</verse>
				<verse number="21">ಅಬ್ನೇರನು ದಾವೀದನಿಗೆ, “ನಾನು ಹೊರಟುಹೋಗಿ ಇಸ್ರಯೇಲರನ್ನೆಲ್ಲಾ ಕೂಡಿಸಿ ನನ್ನ ಒಡೆಯರಾದ ಅರಸರ ಬಳಿಗೆ ಕರೆದುಕೊಂಡು ಬರುವೆನು; ಅವರು ನಿಮ್ಮ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನ ಮಾಡಬಹುದು,” ಎಂದು ಹೇಳಿದನು. ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಕೊಟ್ಟನು.</verse>
				<verse number="22">ಸುಲಿಗೆ ಮಾಡುವುದಕ್ಕಾಗಿ ಹೋಗಿದ್ದ ದಾವೀದನ ಯೋಧರು ಮತ್ತು ಯೋವಾಬನು ದೊಡ್ಡ ಕೊಳ್ಳೆಯೊಡನೆ ಅಷ್ಟರಲ್ಲಿ ಹಿಂದಿರುಗಿ ಬಂದರು. ಅವರು ಹೆಬ್ರೋನಿಗೆ ಬಂದಾಗ ಅಬ್ನೇರನು ದಾವೀದನ ಹತ್ತಿರ ಇರಲಿಲ್ಲ. ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದನು.</verse>
				<verse number="23">ಸೈನ್ಯಸಹಿತವಾಗಿ ಹಿಂದಿರುಗಿ ಬಂದ ಯೋವಾಬನು, ನೇರನ ಮಗನಾದ ಅಬ್ನೇರನು ಬಂದಿದ್ದನೆಂದೂ ತಿಳಿದುಕೊಂಡನು.</verse>
				<verse number="24">ಅರಸನ ಬಳಿಗೆ ಹೋಗಿ, “ನೀವು ಮಾಡಿದ್ದೇನು? ಅಬ್ನೇರನು ನಿಮ್ಮ ಬಳಿಗೆ ಬಂದಿದ್ದನಂತೆ; ನೀವು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟದ್ದೇಕೆ?</verse>
				<verse number="25">ನೇರನ ಮಗನಾದ ಅಬ್ನೇರನ ಸಂಗತಿ ನಿಮಗೆ ಗೊತ್ತಿಲ್ಲವೇ? ಅವನು ನಿಮ್ಮನ್ನು ವಂಚಿಸುವುದಕ್ಕೂ ನಿಮ್ಮ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವುದಕ್ಕೂ ನೀವು ಏನು ಮಾಡುತ್ತೀರೆಂಬುದನ್ನು ಕಂಡುಹಿಡಿಯುವುದಕ್ಕೂ ಬಂದಿದ್ದನಷ್ಟೆ,” ಎಂದು ಹೇಳಿದನು.</verse>
				<verse number="26">ಅನಂತರ ದಾವೀದನನ್ನು ಬಿಟ್ಟು ಹೊರಗೆ ಹೋಗಿ ಅಬ್ನೇರನನ್ನು ಕರೆದುತರುವಂತೆ ದೂತರನ್ನು ಅಟ್ಟಿದನು. ಇವರು ಹೋಗಿ ಸಿರಾ ಬಾವಿಯ ಬಳಿಯಿಂದ ಅವನನ್ನು ಕರೆದುಕೊಂಡುಬಂದರು. ಇದು ದಾವೀದನಿಗೆ ಗೊತ್ತಿರಲಿಲ್ಲ.</verse>
				<verse number="27">ಅಬ್ನೇರನು ಹೆಬ್ರೋನಿಗೆ ಬಂದಾಗ ಯೋವಾಬನು ಅವನನ್ನು ಗುಪ್ತಸಂಭಾಷಣೆಗಾಗಿಯೋ ಎಂಬಂತೆ ಊರಬಾಗಿಲಿನೊಳಗೆ ಕರೆದುಕೊಂಡು ಹೋಗಿ, ತನ್ನ ತಮ್ಮನಾದ ಅಸಾಹೇಲನನ್ನು ವಧಿಸಿದ್ದಕ್ಕೆ ಪ್ರತಿಯಾಗಿ ಅವನನ್ನು ಹೊಟ್ಟೆಯಲ್ಲಿ ತಿವಿದುಕೊಂದನು.</verse>
				<verse number="28">ತುಸುಹೊತ್ತಾದ ಮೇಲೆ ಈ ವರ್ತಮಾನ ದಾವೀದನಿಗೆ ಮುಟ್ಟಿತು. ಆಗ ಅವನು, “ನೇರನ ಮಗನಾದ ಅಬ್ನೇರನ ವಧೆಯಲ್ಲಿ ನಾನೂ ನನ್ನ ರಾಜ್ಯವೂ ಸರ್ವೇಶ್ವರನ ಮುಂದೆ ಸದಾ ನಿರ್ದೋಷಿಗಳು.</verse>
				<verse number="29">ಈ ಅಪರಾಧ ಯೋವಾಬನ ಮೇಲೂ ಅವನ ಸಂತಾನದವರೆಲ್ಲರ ಮೇಲೂ ಇರಲಿ ಅವನ ಮನೆಯಲ್ಲಿ ಮೇಹಸ್ರಾವವುಳ್ಳವರು, ಕುಷ್ಠರೋಗಿಗಳು, ಕುಂಟರು, ಕತ್ತಿಯಿಂದ ಹತರಾಗುವವರು ಹಾಗು ಭಿಕ್ಷೆಬೇಡುವವರು ಇದ್ದೇ ಇರಲಿ,” ಎಂದನು</verse>
				<verse number="30">ಅಬ್ನೇರನು ಗಿಬ್ಯೋನಿನ ಸಮೀಪದಲ್ಲಾದ ಯುದ್ಧದಲ್ಲಿ ಯೋವಾಬ ಅಬೀಷೈಯರ ತಮ್ಮನಾದ ಅಸಾಹೇಲನನ್ನು ವಧಿಸಿದ್ದರಿಂದ ಅವರು ಇವನನ್ನು ಕೊಂದು ಹಾಕಿದರು.</verse>
				<verse number="31">ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣೀತಟ್ಟುಗಳನ್ನು ಉಟ್ಟುಕೊಂಡು, ಸಂತಾಪಸೂಚಿಸುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ,” ಎಂದು ಆಜ್ಞಾಪಿಸಿದನು. ತಾನೂ ಚಟ್ಟದ ಹಿಂದೆ ಹೋದನು.</verse>
				<verse number="32">ಅಬ್ನೇರನ ಶವವನ್ನು ಹೆಬ್ರೋನಿನಲ್ಲಿ ಸಮಾಧಿಮಾಡಿದರು. ಅರಸನು ಅವನ ಸಮಾಧಿಯ ಹತ್ತಿರ ನಿಂತು ಗಟ್ಟಿಯಾಗಿ ಅತ್ತನು; ಜನರೆಲ್ಲರೂ ಅತ್ತರು.</verse>
				<verse number="33">ದಾವೀದನು ಅಬ್ನೇರನನ್ನು ಕುರಿತು, “ಅಬ್ನೇರನೇ, ಮೂರ್ಖರಿಗಾಗುವಂತೆ ನಿನಗೆ ದುರ್ಮರಣವಾಯಿತೇ!</verse>
				<verse number="34">ನಿನ್ನ ಕೈ ಕಂಕಣಬದ್ಧವಾಗಿರಲಿಲ್ಲ, ನಿನ್ನ ಕಾಲಿಗೆ ಬೇಡಿ ಬಿದ್ದಿರಲಿಲ್ಲ, ದುಷ್ಟರಿಂದಲೋ ಎಂಬಂತೆ ನೀನು ಹತನಾದೆಯಲ್ಲಾ!” ಎಂದು ಶೋಕಗೀತೆಯನ್ನು ಹಾಡಿದನು. ಜನರು ಮತ್ತೆ ಕಣ್ಣೀರು ಸುರಿಸಿದರು.</verse>
				<verse number="35">ಸೂರ್ಯಾಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಳುಗುವ ಮೊದಲು ನಾನು ರೊಟ್ಟಿಯನ್ನಾಗಲಿ ಬೇರೆ ಯಾವ ಆಹಾರವನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದು ಮಾಡಲಿ,” ಎಂದು ಆಣೆಯಿಟ್ಟು ಹೇಳಿದನು.</verse>
				<verse number="36">ಜನರು ಇದನ್ನು ಕಂಡು ಮೆಚ್ಚಿದರು; ಅರಸನು ಮಾಡಿದ್ದೆಲ್ಲವೂ ಅವರಿಗೆ ಒಪ್ಪಿಗೆಯಾಯಿತು.</verse>
				<verse number="37">ನೇರನ ಮಗನಾದ ಅಬ್ನೇರನ ವಧೆಯಲ್ಲಿ ಅರಸನ ಕೈವಾಡವಿಲ್ಲ ಎಂಬುದು ಅವನ ಎಲ್ಲಾ ಜನರಿಗೂ ಇಸ್ರಯೇಲರಿಗೂ ಅದೇ ದಿವಸ ಗೊತ್ತಾಯಿತು.</verse>
				<verse number="38">ಅರಸನು ತನ್ನ ಸೇವಕರಿಗೆ, “ಈ ದಿನ ಇಸ್ರಯೇಲರಲ್ಲಿ ಹತನಾದವನು ಒಬ್ಬ ಶ್ರೇಷ್ಠನಾಯಕ ಹಾಗು ಮಹಾಪುರುಷ ಆಗಿದ್ದನೆಂಬುದು ನಿಮಗೆ ಗೊತ್ತಿದೆ.</verse>
				<verse number="39">ನಾನು ರಾಜಾಭಿಷೇಕ ಹೊಂದಿದ್ದರೂ ಈಗ ಏನೂ ಮಾಡಲು ಅಶಕ್ತನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಸರ್ವೇಶ್ವರನೇ ಕೆಡುಕರಿಗೆ ಮುಯ್ಯಿತೀರಿಸಲಿ,” ಎಂದು ಹೇಳಿದನು.</verse>
			</chapter>
			<chapter number="4">
				<verse number="1">ಅಬ್ನೇರನು ಹೆಬ್ರೋನಿನಲ್ಲಿ ಸತ್ತನೆಂಬ ವರ್ತಮಾನ ಸೌಲನ ಮಗನಾದ ಈಷ್ಬೋಶೆತನಿಗೆ ಮುಟ್ಟಿತು; ಅವನ ಕೈಗಳು ಜೋಲುಬಿದ್ದಂತಾದವು; ಇಸ್ರಯೇಲರೆಲ್ಲರು ಕಳವಳಕ್ಕೆ ಈಡಾದರು.</verse>
				<verse number="2">ಸೌಲನ ಮಗನಿಗೆ ಬಾಣ ಹಾಗು ರೇಕಾಬ್ ಎಂಬ ಇಬ್ಬರು ಸೇನಾಪತಿಗಳಿದ್ದರು. ಇವರು ಬೆನ್ಯಾಮೀನ್ ಕುಲದ ಬೇರೋತಿನವನಾದ ರಿಮ್ಮೋನನ ಮಕ್ಕಳು. (ಈ ಬೇರೋತ್ ಎಂಬುದು ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ;</verse>
				<verse number="3">ಆದರೆ ಬೇರೋತ್ಯರು ಗಿತ್ತಯಿಮಿಗೆ ಓಡಿಹೋಗಿ ಅಂದಿನವರೆಗೂ ಅಲ್ಲೇ ಪ್ರವಾಸಿಗಳಾಗಿ ಇದ್ದರು.)</verse>
				<verse number="4">ಸೌಲನ ಮಗ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಕುಂಟ ಮಗನಿದ್ದನು. ಅವನು ಕುಂಟನಾದದ್ದು ಹೀಗೆ: ಸೌಲ ಹಾಗು ಯೋನಾತಾನರು ಸತ್ತರೆಂಬ ವರ್ತಮಾನ ಜೆಸ್ರೀಲಿನಿಂದ ಬಂದಾಗ ಐದು ವರ್ಷದವನಾಗಿದ್ದ ಅವನನ್ನು ಅವನ ದಾದಿ ತೆಗೆದುಕೊಂಡು ಅವಸರದಿಂದ ಓಡಿಹೋಗುವಾಗ ಅವನು ಬಿದ್ದು ಕಾಲು ಮುರಿದುಕೊಂಡನು.</verse>
				<verse number="5">ಈಷ್ಬೋಶೆತನು ಮಧ್ಯಾಹ್ನದ ಬಿಸಿಲು ಹೊತ್ತಿನಲ್ಲಿ ಮನೆಯೊಳಗೆ ಮಲಗಿರುವಾಗ ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್ ಹಾಗು ಬಾಣ ಎಂಬವರು ಅವನ ಮನೆಯ ಬಳಿಗೆಹೋದರು.</verse>
				<verse number="6">ಆಗ ಬಾಗಿಲು ಕಾಯುವವಳು ಗೋದಿ ಕೇರುತ್ತಿದ್ದು ಹಾಗೆಯೇ ತೂಗಡಿಸಿ ನಿದ್ರೆಮಾಡುತ್ತಿರುವುದನ್ನು ಕಂಡು ಅವರು ಗುಟ್ಟಾಗಿ ಒಳಗೆ ಜಾರಿಕೊಂಡರು.</verse>
				<verse number="7">ಒಳಕೋಣೆಯಲ್ಲಿ ಮಂಚದ ಮೇಲೆ ಮಲಗಿದ್ದ ಅರಸನನ್ನು ಹೊಡೆದುಕೊಂದರು. ತಲೆಯನ್ನು ತೆಗೆದುಕೊಂಡರು. ರಾತ್ರಿಯೆಲ್ಲಾ ಅರಾಬಾ ತಗ್ಗಿನಲ್ಲಿ ಪ್ರಯಾಣಮಾಡಿ</verse>
				<verse number="8">ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನ ಬಳಿಗೆ ಬಂದು ಆ ತಲೆಯನ್ನು ಅವನಿಗೆ ತೋರಿಸಿದರು; “ಇಗೋ, ನಿಮ್ಮ ಜೀವತೆಗೆಯಬೇಕೆಂದಿದ್ದ ನಿಮ್ಮ ಶತ್ರುವಾದ ಸೌಲನ ಮಗ ಈಷ್ಬೋಶೆತನ ತಲೆ; ಅರಸರಾದ ನಮ್ಮ ಒಡೆಯರಿಗಾಗಿ ಸರ್ವೇಶ್ವರಸ್ವಾಮಿ ಸೌಲನಿಗೂ ಅವನ ಸಂತಾನಕ್ಕೂ ಈ ಹೊತ್ತು ಸೇಡುತೀರಿಸಿದ್ದಾರೆ,” ಎಂದರು.</verse>
				<verse number="9">ದಾವೀದನು ಬೇರೋತಿನ ರಿಮ್ಮೋನನ ಮಕ್ಕಳು ಆದ ಆ ರೇಕಾಬ್ ಹಾಗು ಬಾಣ ಎಂಬವರಿಗೆ,</verse>
				<verse number="10">“ಸೌಲನ ಮರಣವಾರ್ತೆಯನ್ನು ತಿಳಿಸುವುದು ಶುಭಕರವೆಂದು ಭಾವಿಸಿ ಬಂದು ನನಗೆ ಹೇಳಿದ ಅವನನ್ನು ಹಿಡಿದು ನಾನು ದಂಡಿಸಿದೆ. ಅವನಿಗೆ ಚಿಕ್ಲಗಿನಲ್ಲಿ ಮರಣ ದಂಡನೆಯೆಂಬ ಬಹುಮಾನವನ್ನು ಸಲ್ಲಿಸಿದೆ, ಎಂಬುದು ನಿಮಗೆ ಗೊತ್ತಿಲ್ಲವೆ?</verse>
				<verse number="11">ಮಹಾದುಷ್ಟರಾದ ನೀವು ನೀತಿವಂತನ ಮನೆಹೊಕ್ಕು ಅವನನ್ನು ಅವನ ಮಂಚದ ಮೇಲೆಯೇ ಕೊಂದುಹಾಕಿದ ಮೇಲೆ ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಸರ್ವೇಶ್ವರನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದೇಬಿಡುವೆನು,” ಎಂದು ಹೇಳಿದನು.</verse>
				<verse number="12">ಅಂತೆಯೇ ತನ್ನ ಆಳುಗಳಿಗೆ ಆಜ್ಞಾಪಿಸಿದನು. ಅವರು ಇವರನ್ನು ಕೊಂದು ಕೈಕಾಲುಗಳನ್ನು ಕತ್ತರಿಸಿ ಶವಗಳನ್ನು ಹೆಬ್ರೋನಿನ ಕೆರೆಯ ಬಳಿಯಲ್ಲಿ ನೇತುಹಾಕಿದರು. ಈಷ್ಬೋಶೆತನ ತಲೆಯನ್ನು ಹೆಬ್ರೋನಿನಲ್ಲಿದ್ದ ಇಬ್ನೇರನ ಸಮಾಧಿಯಲ್ಲಿ ಹೂಳಿದರು.</verse>
			</chapter>
			<chapter number="5">
				<verse number="1">ಅನಂತರ ಇಸ್ರಯೇಲರ ಎಲ್ಲ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದರು. “ನಾವು ನಿಮ್ಮ ರಕ್ತಸಂಬಂಧಿಗಳು;</verse>
				<verse number="2">ಹಿಂದಿನ ದಿವಸಗಳಲ್ಲಿ, ಅಂದರೆ ಸೌಲನ ಆಳ್ವಿಕೆಯಲ್ಲಿ, ಇಸ್ರಯೇಲರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವರು ನೀವೇ. ನಿಮ್ಮನ್ನು ಕುರಿತು ಸರ್ವೇಶ್ವರಸ್ವಾಮಿ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗಿರುವೆ,’ ಎಂದು ವಾಗ್ದಾನಮಾಡಿದ್ದಾರೆ,” ಎಂದರು.</verse>
				<verse number="3">ಹೆಬ್ರೋನಿನಲ್ಲಿದ್ದ ಅರಸ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಯೇಲರ ಹಿರಿಯರೊಡನೆ ಅಲ್ಲೇ ಸರ್ವೇಶ್ವರನ ಸನ್ನಿಧಿಯಲ್ಲಿ ಒಪ್ಪಂದಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ ಇಸ್ರಯೇಲರ ಅರಸನನ್ನಾಗಿ ಮಾಡಿದರು.</verse>
				<verse number="4">ದಾವೀದನು ಮೂವತ್ತು ವರ್ಷದವನಾಗಿದ್ದಾಗ ಅರಸನಾಗಿ ನಾಲ್ವತ್ತು ವರ್ಷ ಆಳಿದನು.</verse>
				<verse number="5">ಅವನು ಹೆಬ್ರೋನಿನಲ್ಲಿದ್ದುಕೊಂಡು ಯೆಹೂದ ಕುಲ ಒಂದನ್ನೇ ಆಳಿದ್ದು ಏಳು ವರ್ಷ ಆರು ತಿಂಗಳು; ಜೆರುಸಲೇಮಿನಲ್ಲಿದ್ದುಕೊಂಡು ಯೆಹೂದ್ಯರನ್ನು ಹಾಗು ಇಸ್ರಯೇಲರನ್ನು ಆಳಿದ್ದು ಮೂವತ್ತಮೂರು ವರ್ಷ.</verse>
				<verse number="6">ದಾವೀದನು ತನ್ನ ಜನರನ್ನು ಕರೆದುಕೊಂಡು ಜೆರುಸಲೇಮಿನ ಮೇಲೆ ದಾಳಿ ಮಾಡಲು ಹೊರಟನು. ನಾಡಿನ ಮೂಲನಿವಾಸಿಗಳಾದ ಯೆಬೂಸಿಯರು ಅಲ್ಲಿದ್ದರು. ಅವರು ದಾವೀದನು ಒಳಗೆ ಬರಲಾರನೆಂದು ನೆನೆಸಿ ಅವನಿಗೆ, “ನೀನು ಒಳಗೆ ಬರಕೂಡದು; ಬಂದರೆ ಕುರುಡರು, ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು,” ಎಂದು ಹೇಳಿದರು.</verse>
				<verse number="7">ಆದರೂ ಅವನು, ಈಗ ‘ದಾವೀದನಗರ’ ಎನಿಸಿಕೊಳ್ಳುವ ಸಿಯೋನ್ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು.</verse>
				<verse number="8">ಆ ದಿವಸ ದಾವೀದನು, “ಯೆಬೂಸಿಯರನ್ನು ಜಯಿಸಬೇಕೆಂದಿರುವವನು ಜಲದ್ವಾರದಲ್ಲೆ ಹತ್ತಿ ಹೋಗಿ ನನ್ನನ್ನು ದ್ವೇಷಿಸುವ ಕುರುಡರನ್ನೂ ಕುಂಟರನ್ನೂ ಕಂದಕದಲ್ಲಿ ನಾಶಮಾಡಿಬಿಡಲಿ,” ಎಂದು ಹೇಳಿದನು. ಆದುದರಿಂದಲೇ “ಕುರುಡರೂ ಕುಂಟರೂ ದೇವಾಲಯದೊಳಗೆ ಹೋಗಲಾಗದು,” ಎಂಬ ಹೇಳಿಕೆಯುಂಟು.</verse>
				<verse number="9">ದಾವೀದನು ಆ ಕೋಟೆಗೆ ‘ದಾವೀದನಗರ’ ಎಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಿದ್ದನು. ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ ಒಳಗಿನ ಪೌಳಿಗೋಡೆಯನ್ನು ಕಟ್ಟಿಸಿದನು.</verse>
				<verse number="10">ಸೇನಾಧೀಶ್ವರ ಹಾಗು ಸರ್ವೇಶ್ವರರಾದ ದೇವರು ಅವನೊಂದಿಗೆ ಇದ್ದರು. ಆದ್ದರಿಂದ ಅವನು ಅಭಿವೃದ್ಧಿಹೊಂದುತ್ತಾ ಬಂದನು.</verse>
				<verse number="11">ಟೈರಿನ ರಾಜನಾದ ಹೀರಾಮನು ದಾವೀದನಿಗೆ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಹಾಗು ಶಿಲ್ಪಿಗಳನ್ನು ಕಳುಹಿಸಿದನು. ಅವರು ದಾವೀದನಿಗೆ ಅರಮನೆಯನ್ನು ಕಟ್ಟಿದರು.</verse>
				<verse number="12">ಹೀಗೆ ದಾವೀದನು, “ಸರ್ವೇಶ್ವರಸ್ವಾಮಿ ನನ್ನನ್ನು ಇಸ್ರಯೇಲ್ ಅರಸನನ್ನಾಗಿ ಸ್ಥಿರಪಡಿಸಿದ್ದಾರೆ, ತಮ್ಮ ಪ್ರಜೆಗಳಾದ ಇಸ್ರಯೇಲರ ನಿಮಿತ್ತ ನನ್ನ ರಾಜ್ಯವನ್ನು ಅಭಿವೃದ್ಧಿಪಡಿಸಿದ್ದಾರೆ,” ಎಂದು ತಿಳಿದುಕೊಂಡನು.</verse>
				<verse number="13">ಹೆಬ್ರೋನಿನಿಂದ ಜೆರುಸಲೇಮಿಗೆ ಬಂದ ಮೇಲೆ ದಾವೀದನು ಹೆಚ್ಚುಮಂದಿ ಸ್ತ್ರೀಯರನ್ನು ಪತ್ನಿಯರನ್ನಾಗಿ ಹಾಗು ಉಪಪತ್ನಿಯರನ್ನಾಗಿ ಮಾಡಿಕೊಂಡನು. ಅವನಿಗೆ ಇನ್ನೂ ಕೆಲವು ಮಂದಿ ಗಂಡುಹೆಣ್ಣು ಮಕ್ಕಳು ಹುಟ್ಟಿದರು.</verse>
				<verse number="14">ಅಲ್ಲಿ ಅವನಿಗೆ ಹುಟ್ಟಿದವರ ಹೆಸರುಗಳು ಇವು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,</verse>
				<verse number="15">ಇಬ್ಹಾರ್, ಎಲೀಷೂವ, ನೆಫೆಗ್, ಯಾಫೀಯ,</verse>
				<verse number="16">ಎಲೀಷಾಮ, ಎಲ್ಯಾದ ಹಾಗು ಎಲೀಫೆಲೆಟ್.</verse>
				<verse number="17">ಇಸ್ರಯೇಲರು ದಾವೀದನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ಸಮಾಚಾರ ಫಿಲಿಷ್ಟಿಯರಿಗೆ ಮುಟ್ಟಿತು. ಆಗ ಅವರು ಅವನನ್ನು ಬಂಧಿಸಲು ಬಂದರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು.</verse>
				<verse number="18">ಫಿಲಿಷ್ಟಿಯರು ನಾಡಿನೊಳಗೆ ನುಗ್ಗಿ ರೆಫಾಯಿಮ್ ತಗ್ಗಿಗೆ ಬಂದು ಪಾಳೆಯ ಮಾಡಿಕೊಂಡರು.</verse>
				<verse number="19">ದಾವೀದನು ಸರ್ವೇಶ್ವರನನ್ನು, “ನಾನು ಫಿಲಿಷ್ಟಿಯರ ಮೇಲೆ ದಾಳಿ ಮಾಡಬಹುದೇ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿರಾ?’ ಎಂದು ಕೇಳಿದನು. ಸರ್ವೇಶ್ವರ, “ಹೋಗು, ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸುವೆನು,” ಎಂದು ಉತ್ತರಕೊಟ್ಟರು.</verse>
				<verse number="20">ಆದುದರಿಂದ ಅವನು ಹೋಗಿ ಅವರನ್ನು ಸೋಲಿಸಿದನು. “ಕಟ್ಟೆಯೊಡೆದ ಪ್ರವಾಹದಂತೆ ನನ್ನ ಶತ್ರುಗಳ ಮೇಲೆ ಬಿದ್ದು ಅವರನ್ನು ಸರ್ವೇಶ್ವರ ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾರೆ,” ಎಂದು ಹೇಳಿ ಆ ಯುದ್ಧಸ್ಥಳಕ್ಕೆ, ‘ಬಾಳ್ ಪೆರಾಚೀಮ್’ ಎಂದು ಹೆಸರಿಟ್ಟನು.</verse>
				<verse number="21">ಫಿಲಿಷ್ಟಿಯರು ಅಲ್ಲಿ ಬಿಟ್ಟುಹೋಗಿದ್ದ ವಿಗ್ರಹಗಳನ್ನು ದಾವೀದನೂ ಅವನ ಜನರೂ ತೆಗೆದುಕೊಂಡು ಬಂದರು.</verse>
				<verse number="22">ಫಿಲಿಷ್ಟಿಯರು ಇನ್ನೊಮ್ಮೆ ಹೊರಟುಬಂದು ರೆಫಾಯೀಮ್ ತಗ್ಗಿನಲ್ಲಿ ಇಳಿದುಕೊಂಡರು.</verse>
				<verse number="23">ದಾವೀದನು ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಿದಾಗ ಅವರು, “ನೀನು ನೆಟ್ಟಗೆ ಹೋಗಿ ಅವರ ಮೇಲೆ ದಾಳಿ ಮಾಡಬೇಡ; ಅವರ ಹಿಂದಳವನ್ನು ಸುತ್ತಿಕೊಂಡು ಹೋಗಿ ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.</verse>
				<verse number="24">ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಸರ್ವೇಶ್ವರ, ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕಾಗಿ ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದರು.</verse>
				<verse number="25">ದಾವೀದನು ಸರ್ವೇಶ್ವರನ ಆಜ್ಞಾನುಸಾರ ಮಾಡಿ ಫಿಲಿಷ್ಟಿಯರನ್ನು ಗೆಬದಿಂದ ಗೆಜರಿನವರೆಗೂ ಹೊಡೆದು ಓಡಿಸಿದನು.</verse>
			</chapter>
			<chapter number="6">
				<verse number="1">ಪುನಃ ದಾವೀದನು ಇಸ್ರಯೇಲರಲ್ಲಿ ಮೂವತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಆರಿಸಿಕೊಂಡು ದೇವರ ಮಂಜೂಷವನ್ನು ತರುವುದಕ್ಕಾಗಿ ಅವರೆಲ್ಲರ ಸಹಿತ ಜುದೇಯ ನಾಡಿನ ಬಾಳಾ ಎಂಬಲ್ಲಿಗೆ ಹೋದನು.</verse>
				<verse number="2">ಆ ಮಂಜೂಷವು ದೇವನಾಮದಿಂದ, ಅಂದರೆ ‘ಕೆರೂಬಿಯರ ನಡುವೆ ಆಸೀನರಾಗಿರುವ ಸೇನಾಧೀಶ್ವರ ಸರ್ವೇಶ್ವರ’ ಎಂಬ ನಾಮದಿಂದ ಸುಪ್ರಸಿದ್ಧವಾಗಿತ್ತು.</verse>
				<verse number="3">ದೇವರ ಆ ಮಂಜೂಷವನ್ನು ಗುಡ್ಡದ ಮೇಲಿರುವ ಅಬೀನಾದಾಬನ ಮನೆಯಿಂದ ಹೊರಗೆ ತಂದು ಅದನ್ನು ಒಂದು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನು ಹಾಗು ಅಹೀಯೋವನು ಆ ಬಂಡಿಯನ್ನು ನಡೆಸಿದರು.</verse>
				<verse number="4">ಗುಡ್ಡದ ಮೇಲೆ ವಾಸವಾಗಿದ್ದ ಅಬೀನಾದಾಬನ ಮನೆಯಿಂದ ತೆಗೆಯಲಾದ ಆ ದೇವರ ಮಂಜೂಷದ ಮುಂದೆ ಅಹೀಯೋವನು ನಡೆಯುತ್ತಿದ್ದನು.</verse>
				<verse number="5">ದಾವೀದನೂ ಎಲ್ಲ ಇಸ್ರಯೇಲರೂ ಕಿನ್ನರಿ, ಸ್ವರಮಂಡಲ, ತಮಟೆ, ಝಲ್ಲರಿ, ತಾಳ ಇವುಗಳನ್ನು ಬಾರಿಸಿಕೊಂಡು, ಪೂರ್ಣಾವೇಶದಿಂದ ಗೀತೆಗಳನ್ನು ಹಾಡುತ್ತಾ, ಸರ್ವೇಶ್ವರನ ಮುಂದೆ ನರ್ತನ ಮಾಡುತ್ತಾ ಹೋದರು.</verse>
				<verse number="6">ಅವರು ನಾಕೋನನ ಕಣಕ್ಕೆ ಬಂದಾಗ ಎತ್ತುಗಳು ತಡವರಿಸಿದವು. ಉಜ್ಜನು ಕೈಚಾಚಿ ದೇವರ ಮಂಜೂಷವನ್ನು ಹಿಡಿದನು.</verse>
				<verse number="7">ಆಗ ಸರ್ವೇಶ್ವರ ಉಜ್ಜನ ಮೇಲೆ ಕೋಪಗೊಂಡರು. ಅಂಥ ಅಗೌರವಕ್ಕಾಗಿ ಅವನನ್ನು ದಂಡಿಸಿದರು. ಅವನು ಅಲ್ಲೇ ದೇವರ ಮಂಜೂಷದ ಬಳಿ ಸತ್ತುಬಿದ್ದನು.</verse>
				<verse number="8">ಸರ್ವೇಶ್ವರ ಉಜ್ಜನನ್ನು ಶಿಕ್ಷಿಸಿದ್ದರಿಂದ ದಾವೀದನು ಸಿಟ್ಟುಗೊಂಡು ಆ ಸ್ಥಳಕ್ಕೆ ‘ಪೆರೆಚುಜ್ಜಾ’ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ.</verse>
				<verse number="9">ಆ ದಿನ ದಾವೀದನು ಸರ್ವೇಶ್ವರನಿಗೆ ಭಯಪಟ್ಟನು; ಆ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ ಎಂದು ಆಲೋಚಿಸಿದನು.</verse>
				<verse number="10">ಅದನ್ನು ದಾವೀದನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.</verse>
				<verse number="11">ಸರ್ವೇಶ್ವರನ ಮಂಜೂಷ ಗತ್ ಊರಿನ ಓಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇತ್ತು. ಆ ಅವಧಿಯಲ್ಲಿ ಸರ್ವೇಶ್ವರ ಅವನನ್ನೂ ಅವನ ಮನೆಯವರನ್ನೂ ಆಶೀರ್ವದಿಸಿದರು.</verse>
				<verse number="12">ಹೀಗೆ ಸರ್ವೇಶ್ವರ ತಮ್ಮ ಮಂಜೂಷದ ಕಾರಣ ಓಬೇದೆದೋಮನನ್ನೂ ಅವನಿಗಿರುವುದೆಲ್ಲವನ್ನೂ ಆಶೀರ್ವದಿಸಿದ್ದಾರೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸವದಿಂದ ದಾವೀದನಗರಕ್ಕೆ ತಂದನು.</verse>
				<verse number="13">ಸರ್ವೇಶ್ವರನ ಮಂಜೂಷವನ್ನು ಹೊತ್ತವರು ಆರು ಹೆಜ್ಜೆ ನಡೆದನಂತರ ದಾವೀದನು ಒಂದು ಎತ್ತನ್ನೂ ಒಂದು ಕೊಬ್ಬಿದ ಕರುವನ್ನೂ ಬಲಿದಾನ ಮಾಡಿದನು.</verse>
				<verse number="14">ದಾವೀದನು ಏಫೋದೆಂಬ ನಾರುಮಡಿಯನ್ನು ಮಾತ್ರ ಉಟ್ಟುಕೊಂಡು ಸರ್ವೇಶ್ವರನ ಸನ್ನಿಧಿಯಲ್ಲಿ ಪೂರ್ಣಾವೇಶದಿಂದ ಕುಣಿದಾಡಿದನು.</verse>
				<verse number="15">ಹೀಗೆ ದಾವೀದನು ಹಾಗು ಎಲ್ಲ ಇಸ್ರಯೇಲರೂ ಜಯಕಾರ ಮಾಡುತ್ತಾ ತುತ್ತೂರಿ ಊದುತ್ತಾ ಸರ್ವೇಶ್ವರನ ಮಂಜೂಷವನ್ನು ತಂದರು.</verse>
				<verse number="16">ಮಂಜೂಷವು ದಾವೀದನಗರದೊಳಗೆ ಬರುತ್ತಿರುವಾಗ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿ ನೋಡಿ ದಾವೀದನು ಸರ್ವೇಶ್ವರನ ಮುಂದೆ ನಲಿದಾಡುತ್ತಾ ಕುಣಿಯುತ್ತಾ ಇರುವುದನ್ನು ಕಂಡು ಮನಸ್ಸಿನಲ್ಲೇ ಅವನನ್ನು ತಿರಸ್ಕರಿಸಿದಳು.</verse>
				<verse number="17">ಜನರು ಸರ್ವೇಶ್ವರನ ಮಂಜೂಷವನ್ನು ತಂದು ದಾವೀದನು ಕಟ್ಟಿಸಿದ್ದ ಗುಡಾರದೊಳಗೆ ನಿಯಮಿತ ಸ್ಥಳದಲ್ಲಿ ಇಟ್ಟರು; ಆಗ ದಾವೀದನು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದನು.</verse>
				<verse number="18">ಇದಾದ ಮೇಲೆ ಅವನು ಸೇನಾಧೀಶ್ವರ ಸರ್ವೇಶ್ವರನ ಹೆಸರಿನಲ್ಲಿ ಎಲ್ಲರನ್ನೂ ಆಶೀರ್ವದಿಸಿದನು.</verse>
				<verse number="19">ನೆರೆದುಬಂದು ಸಭೆ ಸೇರಿದ್ದ ಇಸ್ರಯೇಲರಲ್ಲಿ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಮಾಂಸವನ್ನು ಹಾಗು ದ್ರಾಕ್ಷಿ ಹಣ್ಣಿನಿಂದ ಮಾಡಿದ ಉಂಡೆಯನ್ನು ಕೊಡಿಸಿದನು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.</verse>
				<verse number="20">ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದಳು. “ಈ ದಿನ ಇಸ್ರಯೇಲರ ಅರಸರು ಎಂಥ ಅಗೌರವದಿಂದ ನಡೆದುಕೊಂಡರು! ಹುಚ್ಚರಲ್ಲಿ ಒಬ್ಬರಂತೆ ತಮ್ಮ ಜನಸಾಮಾನ್ಯರಾದ ದಾಸಿಯರ ಮುಂದೆ ಬೆತ್ತಲೆಯಾಗಿದ್ದರಲ್ಲಾ!” ಎಂದಳು.</verse>
				<verse number="21">ಆಗ ದಾವೀದನು ಆಕೆಗೆ, “ನಾನು ಮಾಡಿದ್ದು ಸರ್ವೇಶ್ವರನ ಸನ್ನಿಧಿಯಲ್ಲಿ ಮಾತ್ರ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟುಬಿಟ್ಟು, ನನ್ನನ್ನೇ ಆರಿಸಿಕೊಂಡು, ತಮ್ಮ ಪ್ರಜೆಗಳಾದ ಇಸ್ರಯೇಲರ ಅರಸನನ್ನಾಗಿ ಮಾಡಿದ ಆ ಸರ್ವೇಶ್ವರನ ಮುಂದೆ ಇನ್ನೂ ಹೆಚ್ಚಾಗಿ ಕುಣಿದಾಡುವೆನು.</verse>
				<verse number="22">ಇದಕ್ಕಿಂತಲೂ ಹೆಚ್ಚಾದ ತಿರಸ್ಕಾರ ಹೊಂದುವುದಕ್ಕೂ ನನ್ನನ್ನೇ ಅಲ್ಪನೆಂದು ಭಾವಿಸಿಕೊಳ್ಳುವುದಕ್ಕೂ ನಾನು ಸಿದ್ಧನು. ನೀನು ಹೇಳಿದ ದಾಸಿಯರಾದರೋ ನನ್ನನ್ನು ಹೇಗೂ ಸನ್ಮಾನಿಸುವರು!” ಎಂದನು.</verse>
				<verse number="23">ಸೌಲನ ಮಗಳಾದ ಆ ಮೀಕಲಳಿಗೆ ಜೀವದಿಂದಿರುವವರೆಗೂ ಮಕ್ಕಳೇ ಆಗಲಿಲ್ಲ.</verse>
			</chapter>
			<chapter number="7">
				<verse number="1">ಸರ್ವೇಶ್ವರನ ಅನುಗ್ರಹದಿಂದ ಸುತ್ತಮುತ್ತ ಇದ್ದ ವೈರಿಗಳ ಭಯ ನಿಂತುಹೋಯಿತು. ದಾವೀದನು ನೆಮ್ಮದಿಯಿಂದ ಅರಮನೆಯಲ್ಲಿ ವಾಸಿಸುತ್ತಿದ್ದನು.</verse>
				<verse number="2">ಒಂದು ದಿನ ಅವನು ಪ್ರವಾದಿ ನಾತಾನನಿಗೆ, “ನೋಡು, ನಾನು ವಾಸಮಾಡುತ್ತಿರುವುದು ದೇವದಾರು ಮರದಿಂದ ಮಾಡಿದ ಅರಮನೆಯಲ್ಲಿ; ಆದರೆ ದೇವರ ಮಂಜೂಷ ಇರುವುದು ಬಟ್ಟೆಯ ಗುಡಾರದಲ್ಲಿ!” ಎಂದನು.</verse>
				<verse number="3">ಅದಕ್ಕೆ ನಾತಾನನು ಸಮ್ಮತಿಸಿ, “ನಿಮಗೆ ಮನಸ್ಸಿದ್ದಂತೆ ಮಾಡಿ; ಸರ್ವೇಶ್ವರ ನಿಮ್ಮೊಡನೆ ಇದ್ದಾರೆ,” ಎಂದನು.</verse>
				<verse number="4">ಆದರೆ ಅದೇ ರಾತ್ರಿ ಸರ್ವೇಶ್ವರ ನಾತಾನನಿಗೆ ಹೀಗೆಂದು ಆಜ್ಞಾಪಿಸಿದರು:</verse>
				<verse number="5">“ನೀನು ಹೋಗಿ ನನ್ನ ದಾಸ ದಾವೀದನಿಗೆ ತಿಳಿಸಬೇಕಾದುದು ಇದು: ‘ನೀನು ನನಗೊಂದು ದೇವಾಲಯವನ್ನು ಕಟ್ಟಬೇಕೆಂದಿರುವೆಯೋ?</verse>
				<verse number="6">ನಾನು ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಂದಿನಿಂದ ಇಂದಿನವರೆಗೆ ದೇವಾಲಯದಲ್ಲಿ ವಾಸಮಾಡಲಿಲ್ಲ; ಗುಡಾರದಲ್ಲೇ ವಾಸಿಸುತ್ತಾ ಅವರೊಡನೆ ಸಂಚರಿಸಿದೆ.</verse>
				<verse number="7">ಹೀಗೆ ಇಸ್ರಯೇಲರ ಮಧ್ಯೆ ಸಂಚರಿಸುತ್ತಿದ್ದಾಗ ನನ್ನ ಜನರಾದ ಅವರನ್ನು ಪಾಲಿಸುವುದಕ್ಕೆ ಕುಲನಾಯಕನನ್ನು ನೇಮಿಸಿದೆ. ಅವರಾರಿಂದಲೂ ‘ನೀವೇಕೆ ನನಗೆ ದೇವದಾರು ಮರದಿಂದ ದೇವಾಲಯವನ್ನು ಕಟ್ಟಿಸಲಿಲ್ಲ?’ ಎಂದು ಕೇಳಿದ್ದಿಲ್ಲ!”</verse>
				<verse number="8">“ಇದಲ್ಲದೆ, ನೀನು ನನ್ನ ದಾಸ ದಾವೀದನಿಗೆ ಹೇಳು, ಸರ್ವಶಕ್ತ ಸರ್ವೇಶ್ವರನಾದ ನಾನೇ ಹೀಗೆ ಹೇಳಿದೆಯೆಂದು ತಿಳಿಸು: ‘ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ.</verse>
				<verse number="9">ನೀನು ಹೋದಕಡೆಯೆಲ್ಲಾ ನಿನ್ನ ಸಂಗಡ ಇದ್ದೆ. ನಿನ್ನ ಶತ್ರುಗಳನ್ನೆಲ್ಲ ನಿನ್ನ ಕಣ್ಮುಂದೆಯೆ ಸದೆಬಡಿದೆ. ಜಗದ ಮಹಾತ್ಮರ ಹೆಸರಿನಂತೆ ನಿನ್ನ ಹೆಸರನ್ನು ಪ್ರಸಿದ್ಧಗೊಳಿಸುವೆನು.</verse>
				<verse number="10">ನನ್ನ ಪ್ರಜೆ ಇಸ್ರಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಇನ್ನು ಮೇಲೆ ಅವರು ಯಾವ ಭಯವೂ ಇಲ್ಲದೆ ವಾಸಿಸುವರು.</verse>
				<verse number="11">ಪೂರ್ವಕಾಲದಲ್ಲಿ ನಾನು ನನ್ನ ಜನರಿಗೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅಲ್ಲಿಂದೀಚೆಗೆ ಇಸ್ರಯೇಲರು ಶೋಷಣೆಗೆ ಗುರಿಯಾದರು. ಆದರೆ ಇನ್ನು ಮೇಲೆ ಆಗದು. ನೀನು ಶತ್ರುಭಯವಿಲ್ಲದೆ ಸುಖದಿಂದಿರುವಂತೆ ಮಾಡುವೆನು. ಅದು ಮಾತ್ರ ಅಲ್ಲ. ಸರ್ವೇಶ್ವರನಾದ ನಾನು ನಿನಗಾಗಿ ಒಂದು ಮನೆತನವನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ.</verse>
				<verse number="12">ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.</verse>
				<verse number="13">ಅವನು ನನ್ನ ಹೆಸರಿನಲ್ಲಿ ಒಂದು ದೇವಾಲಯವನ್ನು ಕಟ್ಟುವನು. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು.</verse>
				<verse number="14">ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ಅವನು ತಪ್ಪುಮಾಡಿದಾಗ, ಮಗನಿಗೆ ತಂದೆ ಬೆತ್ತದ ರುಚಿತೋರಿಸುವಂತೆ ನಾನು ಅವನನ್ನು ಶಿಕ್ಷಿಸುವೆನು.</verse>
				<verse number="15">ಆದರೆ ನನ್ನ ಕೃಪೆ, ನಿನ್ನ ಕಣ್ಮುಂದೆಯೇ ಸೌಲನನ್ನು ಬಿಟ್ಟು ಹೋದಹಾಗೆ, ಅವನನ್ನು ಬಿಟ್ಟುಹೋಗುವುದಿಲ್ಲ.</verse>
				<verse number="16">ನಿನ್ನ ಮನೆತನವೂ ಅರಸುತನವೂ ಸದಾಕಾಲ ಸ್ಥಿರವಾಗಿರುವುವು; ನಿನ್ನ ಸಿಂಹಾಸನ ಶಾಶ್ವತವಾಗಿರುವುದು.”</verse>
				<verse number="17">ನಾತಾನನು ತನಗಾದ ದರ್ಶನದ ಈ ಮಾತುಗಳನ್ನೆಲ್ಲ ದಾವೀದನಿಗೆ ಹೇಳಿದನು.</verse>
				<verse number="18">ಬಳಿಕ ದಾವೀದನು ಸರ್ವೇಶ್ವರನ ಸನ್ನಿಧಿಗೆ ಹೋಗಿ ಅಲ್ಲಿ ಕುಳಿತುಕೊಂಡು, “ಹೇ ಸರ್ವೇಶ್ವರಾ, ಸರ್ವೇಶ್ವರಾ, ತಾವು ನನ್ನನ್ನು ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು! ನನ್ನ ಕುಟುಂಬ ಎಷ್ಟರದು!</verse>
				<verse number="19">ಸರ್ವೇಶ್ವರಾ, ಸರ್ವೆಶ್ವರಾ, ಇದೂ ಸಾಲದೆಂದೆಣಿಸಿ, ನಿಮ್ಮ ದಾಸನ ಬಹು ಮುಂದಿನ ಸಂತಾನದ ವಿಷಯದಲ್ಲೂ ತಾವು ವಾಗ್ದಾನ ಮಾಡಿರುವಿರಿ. ಸರ್ವೇಶ್ವರಾ, ಸರ್ವೇಶ್ವರಾ, ತಾವು ಹೀಗೆ ವರ್ತಿಸುವುದು ನರಮಾನವರಿಗೆ ಎಂಥಾ ಭಾಗ್ಯ!</verse>
				<verse number="20">ಸರ್ವೇಶ್ವರಾ, ಸರ್ವೇಶ್ವರಾ, ನಿಮ್ಮ ದಾಸ ದಾವೀದನನ್ನು ಚೆನ್ನಾಗಿ ಬಲ್ಲಿರಿ; ನಾನು ಇನ್ನೇನು ಹೇಳಲಿ?</verse>
				<verse number="21">ತಮ್ಮ ಸಂಕಲ್ಪ ಹಾಗೂ ದಯಾನುಸಾರ ಎಂತೆಂಥಾ ಮಹತ್ಕಾರ್ಯವನ್ನು ನಡೆಸಿದಿರಿ! ಅವುಗಳ ಅನುಭವವನ್ನೂ ನಿಮ್ಮ ದಾಸನಿಗಿತ್ತಿರಿ!</verse>
				<verse number="22">ಹೇ ದೇವಾ, ಸರ್ವೇಶ್ವರಾ, ತಾವು ಮಹೋನ್ನತರು, ತಮಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದ ಅವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ತಮ್ಮ ಹೊರತು ದೇವರೇ ಇಲ್ಲ ಎಂಬುದು ನಿಶ್ಚಯ.</verse>
				<verse number="23">ತಮ್ಮ ಇಸ್ರಯೇಲ್ ಪ್ರಜೆಗೆ ಸಮಾನಾದ ಜನಾಂಗ ಲೋಕದಲ್ಲಿ ಯಾವುದಿದೆ? ತಾವೇ ಬಂದು ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿಸಿಕೊಂಡು, ನಿಮ್ಮ ನಾಮವನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟರು ಹಾಗು ಇತರ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವುಗಳ ಕಣ್ಮುಂದೆಯೇ ನಿಮ್ಮ ನಾಡಿನವರ ಪರವಾಗಿ ವಿಸ್ಮಯಕರವಾದ ಮಹತ್ಕಾರ್ಯಗಳನ್ನು ನಡೆಸಿದಿರಿ.</verse>
				<verse number="24">ಇಸ್ರಯೇಲರು ಸದಾಕಾಲ ನಿಮ್ಮ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದಿರಿ; ಸರ್ವೇಶ್ವರಾ, ತಾವಾದಿರಿ ಅವರಿಗೆ ದೇವರು!</verse>
				<verse number="25">“ದೇವರೇ, ಸರ್ವೆಶ್ವರಾ, ತಾವು ತಮ್ಮ ದಾಸನನ್ನೂ ಅವನ ಕುಟುಂಬವನ್ನೂ ಕುರಿತು ಮಾಡಿದ ವಾಗ್ದಾನವನ್ನು ನೆರವೇರಿಸಿರಿ. ಅದು ಸದಾ ಸ್ಥಿರವಾಗಿರಲಿ.</verse>
				<verse number="26">‘ಸರ್ವಶಕ್ತರಾದ ಸರ್ವೆಶ್ವರ, ಇಸ್ರಯೇಲರ ದೇವರು,’ ಎಂಬ ತಮ್ಮ ನಾಮಧೇಯಗಳಿಗೆ ಸದಾಕಾಲವೂ ಮಹಿಮೆ ಉಂಟಾಗಲಿ! ತಮ್ಮ ದಾಸ ದಾವೀದನ ಮನೆತನವು ನಿಮ್ಮ ಸನ್ನಿಧಿಯಲ್ಲಿ ಸ್ಥಿರವಾಗಿರಲಿ.</verse>
				<verse number="27">ಸರ್ವಶಕ್ತರಾದ ಸರ್ವೇಶ್ವರಾ, ಇಸ್ರಯೇಲ್ ದೇವರೇ, ತಾವು ತಮ್ಮ ದಾಸನಿಗೆ, ‘ನಾನು ನಿನಗೊಂದು ಮನೆತನವನ್ನು ಕಟ್ಟುವೆನು’ ಎಂದು ವಾಗ್ದಾನಮಾಡಿದ್ದೀರಿ. ಆದುದರಿಂದಲೇ ಈ ಪ್ರಕಾರ ನಿಮ್ಮನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡೆ.</verse>
				<verse number="28">ಸರ್ವೇಶ್ವರಾ, ಸರ್ವೇಶ್ವರಾ, ನೀವು ನಮ್ಮ ದೇವರು; ನಿಮ್ಮ ವಾಕ್ಯ ಸತ್ಯವಾದದ್ದು; ತಮ್ಮ ದಾಸನಾದ ನನಗೆ ಇಂಥ ಶ್ರೇಷ್ಠ ವಾಗ್ದಾನ ಮಾಡಿದ್ದೀರಿ.</verse>
				<verse number="29">ನಿಮ್ಮ ದಾಸನ ಮನೆತನವನ್ನು ಆಶೀರ್ವದಿಸಿರಿ; ಸದಾಕಾಲ ನಿಮ್ಮ ಅನುಗ್ರಹ ಅದರ ಮೇಲಿರಲಿ. ಸರ್ವೇಶ್ವರಾ, ಸರ್ವೇಶ್ವರಾ, ವಾಗ್ದಾನ ಮಾಡಿದವರು ತಾವೇ. ತಮ್ಮ ಆಶೀರ್ವಾದದಿಂದ ತಮ್ಮ ದಾಸನಾದ ನನ್ನ ಮನೆತನದಲ್ಲಿ ನಿತ್ಯ ಸೌಭಾಗ್ಯ ನೆಲಸಿರಲಿ!” ಎಂದನು.</verse>
			</chapter>
			<chapter number="8">
				<verse number="1">ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ, ಅವರನ್ನು ಸೋಲಿಸಿದನು. ಅವರ ರಾಜಧಾನಿಯನ್ನು ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.</verse>
				<verse number="2">ಆಮೇಲೆ ಮೋವಾಬ್ಯರನ್ನು ಸೋಲಿಸಿದನು. ಸೆರೆಯಾಳುಗಳನ್ನು ನೆಲದಮೇಲೆ ಮಲಗಿಸಿ ಹಗ್ಗದಿಂದ ಅಳತೆಮಾಡಿಸಿ, ಎರಡು ಪಾಲು ಜನರನ್ನು ಕೊಲ್ಲಿಸಿ ಒಂದು ಪಾಲನ್ನು ಉಳಿಸಿದನು. ಮೋವಾಬ್ಯರು ದಾವೀದನಿಗೆ ಅಧೀನರಾಗಿ ಅವನಿಗೆ ಕಪ್ಪಕೊಡಬೇಕಾಯಿತು.</verse>
				<verse number="3">ಬಳಿಕ ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ದಾವೀದನು ಪರಾಭವಗೊಳಿಸಿದನು.</verse>
				<verse number="4">ಸಾವಿರದ ಏಳುನೂರು ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು, ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು.</verse>
				<verse number="5">ದಮಸ್ಕದ ಸಿರಿಯಾದವರು ಚೋಬದ ಅರಸನಾದ ಹದದೆಜೆರನಿಗೆ ನೆರವಾಗಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸದೆಬಡಿದನು.</verse>
				<verse number="6">ದಮಸ್ಕದ ಅರಾಮ್ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಸಿರಿಯಾದವರು ಅವನಿಗೆ ಅಧೀನರಾಗಿ ಕಪ್ಪ ಕೊಡತೊಡಗಿದರು. ಸರ್ವೆಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯ ದೊರಕಿತು.</verse>
				<verse number="7">ಅವನು ಹದದೆಜೆರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ಕಿತ್ತುಕೊಂಡು ಜೆರುಸಲೇಮಿಗೆ ಒಯ್ದನು.</verse>
				<verse number="8">ಇದಲ್ಲದೆ ಹದದೆಜೆರನ ಪಟ್ಟಣಗಳಿಂದ ಬೆಟಹದಿಂದಲೂ ಬೇರೋತೈಯಿಂದಲೂ ಅಪಾರ ತಾಮ್ರವನ್ನು ತೆಗೆದುಕೊಂಡು ಬಂದನು.</verse>
				<verse number="9">ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನ ಹಮಾತಿನ ಅರಸನಾದ ತೋವಿಗೆ ಮುಟ್ಟಿತು.</verse>
				<verse number="10">ತೋವಿಗೂ ಹದದೆಜೆರನಿಗೂ ಹಗೆತನವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ ಅವನನ್ನು ಸೋಲಿಸಿದುದರಿಂದ ತೋವು ದಾವೀದನನ್ನು ಅಭಿನಂದಿಸುವುದಕ್ಕಾಗಿ ಹಾಗು ಹರಸುವುದಕ್ಕಾಗಿ ತನ್ನ ಮಗ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೆ ತಾಮ್ರ, ಬೆಳ್ಳಿ ಹಾಗು ಬಂಗಾರದ ಪಾತ್ರೆಗಳನ್ನು ತಂದನು.</verse>
				<verse number="11">ಅರಸನಾದ ದಾವೀದನು ಈ ಕಾಣಿಕೆಗಳನ್ನು ಮಾತ್ರವಲ್ಲದೆ, ತನ್ನಿಂದ ಅಪಜಯಹೊಂದಿದ್ದ ಅರಾಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಹಾಗು ಅಮಾಲೇಕ್ಯರು ಎಂಬ ಸುತ್ತಮುತ್ತಿನ ಜನಾಂಗಗಳಿಂದಲೂ ಮತ್ತು ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ</verse>
				<verse number="12">ಪಡೆದುಕೊಂಡ ಬೆಳ್ಳಿ ಬಂಗಾರವನ್ನೂ ಸರ್ವೇಶ್ವರನಿಗೆ ಪ್ರತಿಷ್ಠಾಪಿಸಿದನು.</verse>
				<verse number="13">ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರಮಂದಿ ಸೈನಿಕರನ್ನು ಸೋಲಿಸಿಬಂದು ಅಂದಿನಿಂದ ಬಹಳ ಪ್ರಖ್ಯಾತಿ ಹೊಂದಿದನು.</verse>
				<verse number="14">ಎದೋಮಿನಲ್ಲೆಲ್ಲಾ ಅವನು ಕಾವಲು ದಂಡುಗಳನ್ನಿರಿಸಿದನು. ಹೀಗೆ ಎದೋಮ್ಯರೆಲ್ಲರೂ ದಾವೀದನ ಅಡಿಯಾಳುಗಳಾದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿಹೋದರೂ ಜಯ ಉಂಟಾಯಿತು.</verse>
				<verse number="15">ದಾವೀದನು ಸಮಸ್ತ ಇಸ್ರಯೇಲಿಗೂ ಅರಸನಾಗಿ ಪ್ರಜೆಗಳೆಲ್ಲರನ್ನೂ ಧರ್ಮಾನುಸಾರ ನ್ಯಾಯಯುತವಾಗಿ ನಡೆಸುತ್ತಿದ್ದನು.</verse>
				<verse number="16">ಚೆರೂಯಳ ಮಗ ಯೋವಾಬನು ಅವನ ಸೇನಾಪತಿ ಆಗಿದ್ದನು. ಅಹೀಲೂದನ ಮಗ ಯೆಹೋಷಾಫಟನು ಅವನ ಮಂತ್ರಿ ಆಗಿದ್ದನು.</verse>
				<verse number="17">ಅಹೀಟೂಬನ ಮಗ ಚಾದೋಕನೂ ಹಾಗು ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು; ಸರಾಯನು ಅವನಿಗೆ ಲೇಖಕ ಆಗಿದ್ದನು.</verse>
				<verse number="18">ಯೆಹೋಯಾದಾವನ ಮಗ ಬೆನಾಯನು ‘ಕೆರೇತ್ಯ’, ‘ಪೆಲೇತ್ಯ,’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳೂ ಯಾಜಕರಾಗಿದ್ದರು.</verse>
			</chapter>
			<chapter number="9">
				<verse number="1">ಒಂದು ದಿನ ದಾವೀದನು, “ಸೌಲನ ಮನೆಯವರಲ್ಲಿ ಯಾರಾದರು ಇನ್ನೂ ಉಳಿದಿದ್ದಾರೋ? ಯೋನಾತಾನನ ಸಲುವಾಗಿ ನಾನು ಅವರಿಗೆ ದಯೆತೋರಿಸಬೇಕೆಂದಿರುತ್ತೇನೆ,” ಎಂದು ವಿಚಾರಿಸಿದನು.</verse>
				<verse number="2">ಸೌಲನ ಮನೆಯಲ್ಲಿ ಊಳಿಗನಾಗಿದ್ದ ಚೀಬ ಎಂಬ ವ್ಯಕ್ತಿಯನ್ನು ಕರೆದುಕೊಂಡು ಬಂದರು. ಅರಸನು ಅವನನ್ನು, “ನೀನು ಚೀಬನೋ?’ ಎಂದು ಕೇಳಲು ಅವನು, “ನಿಮ್ಮ ಊಳಿಗನಾದ ನಾನು ಚೀಬನೇ,” ಎಂದು ಉತ್ತರಕೊಟ್ಟನು.</verse>
				<verse number="3">ಆಗ ಅರಸನು, “ಸೌಲನ ಕುಟುಂಬದವರಲ್ಲಿ ಯಾರಾದರೂ ಉಳಿದಿದ್ದರೆ ಹೇಳು; ನಾನು ದೇವರನ್ನು ನೆನಸಿ ಅವರಿಗೆ ದಯೆ ತೋರಿಸುತ್ತೇನೆ,” ಎಂದನು. ಆಗ ಚೀಬನು, “ಯೋನಾತಾನನಿಗೆ, ಎರಡು ಕಾಲೂ ಕುಂಟಾದ ಒಬ್ಬ ಮಗನಿರುತ್ತಾನೆ,” ಎಂದು ಹೇಳಿದನು.</verse>
				<verse number="4">ಅರಸನು, “ಎಲ್ಲಿದ್ದಾನೆ?” ಎಂದು ಕೇಳಲು ಅವನು, “ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಲ್ಲಿರುತ್ತಾನೆ,” ಎಂದು ಉತ್ತರಕೊಟ್ಟನು.</verse>
				<verse number="5">ಕೂಡಲೆ ಅರಸನು ದೂತರನ್ನು ಕಳುಹಿಸಿ ಅವನನ್ನು ಲೋದೆಬಾರಿನಲ್ಲಿದ್ದ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಿಂದ ಕರೆಯಿಸಿದನು.</verse>
				<verse number="6">ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಆ ಮೆಫೀಬೋಶೆತನು ಬಂದು ದಾವೀದನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ದಾವೀದನು, “ಮೆಫೀಬೋಶೆತನೇ,” ಎಂದೊಡನೆ ಅವನು, “ನಿನ್ನ ಸೇವಕನಾದ ನಾನು ಇಲ್ಲಿದ್ದೇನೆ,” ಎಂದನು.</verse>
				<verse number="7">ಆಗ ದಾವೀದನು, “ಹೆದರಬೇಡ; ನಿನ್ನ ತಂದೆ ಯೋನಾತಾನನ ನೆನಪಿನಲ್ಲಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ; ಇದಲ್ಲದೆ ನೀನು ಪ್ರತಿದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು,” ಎಂದು ಹೇಳಿದನು.</verse>
				<verse number="8">ಮೆಫೀಬೋಶೆತನು ಇದನ್ನು ಕೇಳಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿ, “ಸತ್ತ ನಾಯಿಯಂತಿರುವ ನನ್ನನ್ನು ತಾವು ಗಮನಿಸಲು ನಿಮ್ಮ ಗುಲಾಮನಾದ ನಾನು ಅಪಾತ್ರನೇ!” ಎಂದನು.</verse>
				<verse number="9">ಅನಂತರ ದಾವೀದನು ಸೌಲನ ಸೇವಕ ಚೀಬನನ್ನು ಕರೆದು ಅವನಿಗೆ, “ನಿನ್ನ ಯಜಮಾನ ಸೌಲನಿಗೂ ಅವನ ಕುಟುಂಬದವರಿಗೂ ಇದ್ದುದ್ದನ್ನೆಲ್ಲಾ ಅವನ ಮೊಮ್ಮಗನಿಗೆ ಕೊಟ್ಟಿರುತ್ತೇನೆ.</verse>
				<verse number="10">ನೀನೂ ನಿನ್ನ ಮಕ್ಕಳೂ ಆಳುಗಳೂ ನಿನ್ನ ಯಜಮಾನನ ಮೊಮ್ಮಗನಿಗಾಗಿ ಆ ಭೂಮಿಯನ್ನು ವ್ಯವಸಾಯಮಾಡಿ ಅದರ ಬೆಳೆಯನ್ನು ಇವನ ಮನೆಯವರ ಅಶನಾರ್ಥವಾಗಿ ತಂದುಕೊಡಬೇಕು. ಇವನಿಗಾದರೋ ನಿತ್ಯವೂ ನನ್ನ ಪಂಕ್ತಿಯಲ್ಲೇ ಭೋಜನವಾಗುವುದು,” ಎಂದು ಹೇಳಿದನು. ಚೀಬನಿಗೆ ಹದಿನೈದು ಮಂದಿ ಗಂಡು ಮಕ್ಕಳೂ ಇಪ್ಪತ್ತು ಮಂದಿ ಆಳುಗಳೂ ಇದ್ದರು.</verse>
				<verse number="11">ಚೀಬನು ಅರಸನಿಗೆ, “ಒಡೆಯರಾದ ಅರಸರ ಅಪ್ಪಣೆ ಮೇರೆಗೆ ಸೇವಕನು ನಡೆಯುವನು,” ಎಂದು ಉತ್ತರಕೊಟ್ಟನು. ಈ ಪ್ರಕಾರ ಮೆಫೀಬೋಶೆತನು ರಾಜಪುತ್ರರಂತೆ ಅರಸನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.</verse>
				<verse number="12">ಅವನಿಗೆ ಮೀಕನೆಂಬೊಬ್ಬ ಚಿಕ್ಕ ಮಗನಿದ್ದನು; ಚೀಬನ ಮನೆಯವರೆಲ್ಲರೂ ಅವನ ಸೇವಕರು.</verse>
				<verse number="13">ಮೆಫೀಬೋಶೆತನಿಗೆ ಪ್ರತಿದಿನವೂ ರಾಜಪಂಕ್ತಿಯಲ್ಲಿ ಊಟವಾಗುತ್ತಿದ್ದುದರಿಂದ ಅವನು ಜೆರುಸಲೇಮಿನಲ್ಲೇ ವಾಸಿಸಿದನು. ಅವನ ಎರಡು ಕಾಲುಗಳೂ ಕುಂಟಾಗಿದ್ದವು.</verse>
			</chapter>
			<chapter number="10">
				<verse number="1">ಇದಾದನಂತರ ಅಮ್ಮೋನಿಯರ ಅರಸನು ಸತ್ತನು. ಅವನಿಗೆ ಬದಲಾಗಿ ಅವನ ಮಗ ಹಾನೂನನು ಅರಸನಾದನು.</verse>
				<verse number="2">ದಾವೀದನು, “ನಾಹಾಷನು ನನಗೆ ಸ್ನೇಹತೋರಿಸಿದ್ದರಿಂದ ನಾನೂ ಅವನ ಮಗ ಹಾನೂನನಿಗೆ ಸ್ನೇಹ ತೋರಿಸುವೆನು,” ಎಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕಾಗಿ ತನ್ನ ಸೇವಕರನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನಿಯರ ದೇಶಕ್ಕೆ ಬಂದರು.</verse>
				<verse number="3">ಅಲ್ಲಿನ ನಾಯಕರು ತಮ್ಮ ಒಡೆಯ ಹಾನೂನನಿಗೆ, “ದಾವೀದನು ನಿಮ್ಮ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದಾನೆ. ಇದರಿಂದ ಅವನು ನಿಮ್ಮ ತಂದೆಯನ್ನು ಸನ್ಮಾನಿಸುತ್ತಾನೆಂದು ತಿಳಿಯುತ್ತೀರೋ? ಇಲ್ಲವೇ ಇಲ್ಲ. ಪಟ್ಟಣವನ್ನು ಸಂಚರಿಸಿ ನೋಡಿ ಅದನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ತನ್ನ ಆಳುಗಳನ್ನು ಕಳುಹಿಸಿದ್ದಾನೆ,” ಎಂದು ಹೇಳಿದರು.</verse>
				<verse number="4">ಆದುದರಿಂದ ಹಾನೂನನು ದಾವೀದನ ಸೇವಕರನ್ನು ಬಂಧಿಸಿದನು. ಗಡ್ಡದ ಅರ್ಧಭಾಗವನ್ನು ಬೋಳಿಸಿ ಅವರ ನಿಲುವಂಗಿಗಳನ್ನು ಕುಂಡಿಯಿಂದ ಕೆಳಗಿನ ಭಾಗವನ್ನೆಲ್ಲಾ ಕತ್ತರಿಸಿ ಕಳುಹಿಸಿಬಿಟ್ಟನು.</verse>
				<verse number="5">ಆವರು ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದರು. ಬಹಳವಾಗಿ ಅಪಮಾನ ಹೊಂದಿದ ಅವರಿಗೆ ದಾವೀದನು ಆಳುಗಳ ಮುಖಾಂತರ, “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಜೆರಿಕೋವಿನಲ್ಲಿದ್ದು ಅನಂತರ ಬನ್ನಿ,” ಎಂದು ಹೇಳಿಸಿದನು.</verse>
				<verse number="6">ತಾವು ದಾವೀದನಿಗೆ ವೈರಿಗಳಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಹಣಕೊಟ್ಟು ಬೇತ್ ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಸಿರಿಯಾದವರ ಇಪ್ಪತ್ತು ಸಾವಿರಮಂದಿ ಕಾಲಾಳುಗಳನ್ನು, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನು ಹಾಗು ಟೋಬ್ ದೇಶದಿಂದ ಹನ್ನೆರಡು ಸಾವಿರ ಮಂದಿ ದಂಡಾಳುಗಳನ್ನೂ ಬರಮಾಡಿದರು.</verse>
				<verse number="7">ಈ ಸುದ್ದಿ ದಾವೀದನಿಗೆ ಮುಟ್ಟಿತು.ಅವನು ಯೋವಾಬನನ್ನೂ ಎಲ್ಲಾ ಶೂರ ಸೈನಿಕರನ್ನೂ ಕಳುಹಿಸಿದನು.</verse>
				<verse number="8">ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರಬಾಗಿಲಿನ ಬಳಿಯಲ್ಲೆ ವ್ಯೂಹಕಟ್ಟಿದರು. ಚೋಬಾ ಮತ್ತು ರೆಹೋಬ್ ಎಂಬ ಸ್ಥಳಗಳ ಸಿರಿಯಾದವರೂ ಟೋಬ್, ಮಾಕಾ ದೇಶಗಳವರೂ ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು.</verse>
				<verse number="9">ಯೋವಾಬನು ತನ್ನ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಯೇಲರಲ್ಲಿ ಶ್ರೇಷ್ಠರಾದ ಸೈನಿಕರನ್ನು ಆರಿಸಿಕೊಂಡು ಅವರನ್ನು ಸಿರಿಯಾದವರಿಗೆ ವಿರುದ್ಧ ನಿಲ್ಲಿಸಿದನು.</verse>
				<verse number="10">ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟು,</verse>
				<verse number="11">“ಸಿರಿಯಾದವರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ; ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುತ್ತೇನೆ.</verse>
				<verse number="12">ಧೈರ್ಯದಿಂದಿರು, ನಮ್ಮ ಜನರಿಗಾಗಿ ಹಾಗು ನಮ್ಮ ದೇವರ ಪಟ್ಟಣಗಳಿಗಾಗಿ ನಮ್ಮ ಪೌರುಷವನ್ನು ತೋರಿಸೋಣ; ಸರ್ವೇಶ್ವರ ತಮಗೆ ಸರಿಕಾಣುವಂಥದ್ದನ್ನು ಮಾಡಲಿ,” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.</verse>
				<verse number="13">ಯೋವಾಬನೂ ಅವನ ಜನರೂ ಸಿರಿಯಾದವರಿಗೆ ವಿರೋಧವಾಗಿ ಯುದ್ಧ ಪ್ರಾರಂಭಿಸಿದಾಗ ಸಿರಿಯಾದವರು ಓಡಿಹೋದರು.</verse>
				<verse number="14">ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅಬೀಷೈಯನ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಹೊಕ್ಕರು. ಯೋವಾಬನು ಅಮ್ಮೋನಿಯರೊಡನೆ ಯುದ್ಧಮಾಡುವುದನ್ನು ಬಿಟ್ಟು ಜೆರುಸಲೇಮಿಗೆ ಹೋದನು.</verse>
				<verse number="15">ಸಿರಿಯಾದವರಿಗೆ ತಮ್ಮ ಸೈನ್ಯ ಇಸ್ರಯೇಲರಿಂದ ಪರಾಭವಗೊಂಡಿತೆಂದು ಗೊತ್ತಾದಾಗ ಅವರೆಲ್ಲರೂ ಕೂಡಿಬಂದರು.</verse>
				<verse number="16">ಹದದೆಜೆರನು ಯೂಫ್ರಟಿಸ್ ನದಿಯ ಆಚೆಯಲ್ಲಿದ್ದ ಸಿರಿಯಾದವರನ್ನು ಬರಮಾಡಿದನು; ಅವರು ಹೇಲಾಮಿಗೆ ಬಂದರು. ಹದದೆಜೆರನ ಸೇನಾಪತಿಯಾದ ಶೋಬಕನು ಅವರ ನಾಯಕನಾದನು.</verse>
				<verse number="17">ಈ ಸುದ್ದಿ ದಾವೀದನಿಗೆ ಮುಟ್ಟಿದಾಗ ಅವನು ಇಸ್ರಯೇಲರೆಲ್ಲರನ್ನೂ ಕೂಡಿಸಿಕೊಂಡು ಜೋರ್ಡನ್ ನದಿ ದಾಟಿ ಹೇಲಾಮಿಗೆ ಬಂದನು. ಸಿರಿಯಾದವರು ವ್ಯೂಹಕಟ್ಟಿ ದಾವೀದನೊಡನೆ ಯುದ್ಧಕ್ಕೆ ನಿಂತರು.</verse>
				<verse number="18">ಆದರೆ ಇಸ್ರಯೇಲರ ಮುಂದೆ ಸೋತು ಓಡಿಹೋದರು; ದಾವೀದನು ಸಿರಿಯಾದವರ ಏಳುನೂರು ರಥಗಳನ್ನು ಹಾಳುಮಾಡಿದನು. ನಾಲ್ವತ್ತು ಸಾವಿರ ಮಂದಿ ರಾಹುತರನ್ನು ಕೊಂದನು. ಸೇನಾಪತಿಯಾದ ಶೋಬಕನು ಗಾಯಗೊಂಡು ಅಲ್ಲೇ ಸತ್ತನು.</verse>
				<verse number="19">ಹದದೆಜೆರನಿಗೆ ದಾಸರಾಗಿದ್ದ ರಾಜರೆಲ್ಲರೂ ಇಸ್ರಯೇಲರ ಮುಂದೆ ತಮ್ಮ ಕೈಸಾಗದೆಂದು ತಿಳಿದು ಅವರೊಡನೆ ಸಂಧಾನ ಮಾಡಿಕೊಂಡು ಅವರ ಅಧೀನರಾದರು. ಅಂದಿನಿಂದ ಸಿರಿಯಾದವರು ಅಮ್ಮೋನಿಯರಿಗೆ ಸಹಾಯ ಮಾಡುವುದಕ್ಕೆ ಧೈರ್ಯಗೊಳ್ಳಲಿಲ್ಲ.</verse>
			</chapter>
			<chapter number="11">
				<verse number="1">ರಾಜರು ಸಾಮಾನ್ಯವಾಗಿ ಯುದ್ಧಕ್ಕೆ ಹೊರಡುವ ವಸಂತಕಾಲ ಅದು. ದಾವೀದನು ಯೋವಾಬನನ್ನು, ತನ್ನ ಸೇವಕರನ್ನು ಹಾಗು ಎಲ್ಲ ಇಸ್ರಯೇಲರನ್ನು ಯುದ್ಧಕ್ಕೆ ಕಳುಹಿಸಿದನು. ಇವರು ಹೋಗಿ ಅಮ್ಮೋನಿಯರ ಪ್ರಾಂತ್ಯಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದರು. ದಾವೀದನು ಜೆರುಸಲೇಮಿನಲ್ಲೇ ಇದ್ದನು.</verse>
				<verse number="2">ಒಂದು ದಿನ ಸಂಜೆ ಹೊತ್ತಿನಲ್ಲಿ ದಾವೀದನು ಮಂಚದಿಂದೆದ್ದು ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಆಗ ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.</verse>
				<verse number="3">ಕೂಡಲೆ ದಾವೀದನು ಒಬ್ಬನನ್ನು ಕರೆದು ಆ ಸ್ತ್ರೀ ಯಾರೆಂದು ಕೇಳಿದನು. ಅವನು, “ಆಕೆ ಎಲೀಯಾಮನ ಮಗಳೂ ಹಿತ್ತಿಯನಾದ ಊರೀಯನ ಹೆಂಡತಿಯೂ ಆದ ಬತ್ಷೆಬೆ,” ಎಂದು ಉತ್ತರಕೊಟ್ಟನು.</verse>
				<verse number="4">ಆಕೆ ಆಗ ತಾನೆ ಋತುಸ್ನಾನ ಮಾಡಿಕೊಂಡಿದ್ದಳು. ಆಕೆಯನ್ನು ಕರೆದುತರುವಂತೆ ದಾವೀದನು ದೂತರನ್ನು ಕಳುಹಿಸಿದನು. ಆಕೆ ಬಂದಳು. ದಾವೀದನು ಆಕೆಯನ್ನು ಕೂಡಿದನು. ಅನಂತರ ಆಕೆ ತನ್ನ ಮನೆಗೆ ಹೋದಳು.</verse>
				<verse number="5">ಮುಂದೆ, ತಾನು ಗರ್ಭಧರಿಸಿದ್ದು ಗೊತ್ತಾದಾಗ ಆಕೆ ದಾವೀದನಿಗೆ ಸಮಾಚಾರ ಕಳುಹಿಸಿದಳು.</verse>
				<verse number="6">ಒಡನೆ ದಾವೀದನು ದೂತರ ಮುಖಾಂತರ ಯೋವಾಬನಿಗೆ, “ಹಿತ್ತಿಯನಾದ ಊರೀಯನನ್ನು ನನ್ನ ಬಳಿಗೆ ಕಳುಹಿಸು,” ಎಂದು ಆಜ್ಞಾಪಿಸಿದನು. ಅವನು ಅಂತೆಯೇ ಮಾಡಿದನು.</verse>
				<verse number="7">ಊರೀಯನು ಬಂದಾಗ ದಾವೀದನು, “ಯೋವಾಬನೂ ಸೈನ್ಯದವರೂ ಹೇಗಿರುತ್ತಾರೆ? ಯುದ್ಧವು ಹೇಗೆ ನಡೆಯುತ್ತಿದೆ?” ಎಂದು ವಿಚಾರಿಸಿದನು.</verse>
				<verse number="8">ಅನಂತರ ಅವನಿಗೆ, “ನೀನು ಮನೆಗೆ ಹೋಗಿ ಕೈಕಾಲು ತೊಳೆದುಕೋ,” ಎಂದು ಹೇಳಿದನು. ಊರೀಯನು ಅರಮನೆಯಿಂದ ಹೊರಟ ಕೂಡಲೆ ಅವನ ಹಿಂದೆಯೇ ಅರಸನ ಭೋಜನ ಪದಾರ್ಥಗಳೂ ಹೋದವು.</verse>
				<verse number="9">ಆದರೆ ಊರೀಯನು ತನ್ನ ಮನೆಗೆ ಹೋಗದೆ ಅರಸನ ಸೇವಕರೊಡನೆ ಅರಮನೆಯ ಬಾಗಿಲಲ್ಲೇ ಮಲಗಿಕೊಂಡನು.</verse>
				<verse number="10">ಊರೀಯನು ತನ್ನ ಮನೆಗೆ ಹೋಗಲಿಲ್ಲ ಎಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಆಗ ದಾವೀದನು ಊರೀಯನಿಗೆ, “ನೀನು ದೀರ್ಘಪ್ರಯಾಣಮಾಡಿ ಬಂದಿರುವೆಯಲ್ಲವೆ? ಏಕೆ ಮನೆಗೆ ಹೋಗಲಿಲ್ಲ?” ಎಂದನು.</verse>
				<verse number="11">ಅದಕ್ಕೆ ಊರೀಯನು, “ಒಡಂಬಡಿಕೆಯ ಮಂಜೂಷ, ಇಸ್ರಯೇಲರು ಹಾಗು ಯೆಹೂದ್ಯರು ಗುಡಾರಗಳಲ್ಲೇ ವಾಸವಾಗಿದ್ದಾರೆ. ನನ್ನ ಒಡೆಯನಾದ ಯೋವಾಬನೂ ಅವನ ಸೇವಕರೂ ಬಯಲಿನಲ್ಲೇ ಪಾಳೆಯಮಾಡಿಕೊಂಡಿದ್ದಾರೆ. ಹೀಗಿರುವಲ್ಲಿ, ನಾನು ನನ್ನ ಮನೆಗೆ ಹೋಗಿ ಉಂಡು, ಕುಡಿದು, ಹೆಂಡತಿಯೊಡನೆ ಮಲಗಿಕೊಳ್ಳುವುದು ಹೇಗೆ? ನಿಮ್ಮಾಣೆ, ನಿಮ್ಮ ಜೀವದ ಆಣೆ, ನಾನು ಇಂಥದನ್ನು ಎಂದಿಗೂ ಮಾಡಲಾರೆ,” ಎಂದು ಉತ್ತರಕೊಟ್ಟನು.</verse>
				<verse number="12">ಆಗ ದಾವೀದನು, “ಹಾಗಾದರೆ ನೀನು ಈ ಹೊತ್ತು ಇಲ್ಲೇ ಇರು; ನಾಳೆ ನಿನ್ನನ್ನು ಕಳುಹಿಸುತ್ತೇನೆ,” ಎಂದು ಆಜ್ಞಾಪಿಸಿದನು. ಅಂತೆಯೇ ಊರೀಯನು ಆ ದಿನ ಜೆರುಸಲೇಮಿನಲ್ಲೇ ಇದ್ದನು.</verse>
				<verse number="13">ಮರುದಿನ ದಾವೀದನು ಅವನನ್ನು ಅನ್ನಪಾನ ತೆಗೆದುಕೊಳ್ಳಬೇಕೆಂದು ತನ್ನ ಮನೆಗೆ ಕರೆದುಕೊಂಡು ಹೋಗಿ ಕುಡಿಸಿ ಮತ್ತನನ್ನಾಗಿ ಮಾಡಿದನು. ಆದರೆ ಆ ರಾತ್ರಿಯೂ ಅವನು ಹೋಗಿ ತನ್ನ ಯಜಮಾನನ ಸೇವಕರ ಹತ್ತಿರ ಹಾಸಿಗೆ ಹಾಸಿ ಮಲಗಿಕೊಂಡನೇ ಹೊರತು ತನ್ನ ಮನೆಗೆ ಹೋಗಲಿಲ್ಲ.</verse>
				<verse number="14">ಮರುದಿನ ಬೆಳಿಗ್ಗೆ ದಾವೀದನು ಯೋವಾಬನಿಗೆ ಒಂದು ಪತ್ರವನ್ನು ಬರೆದು ಅದನ್ನು ಊರೀಯನ ಕೈಯಲ್ಲಿ ಕೊಟ್ಟುಕಳುಹಿಸಿದನು.</verse>
				<verse number="15">ಅದರಲ್ಲಿ ಹೀಗೆ ಬರೆಯಲಾಗಿತ್ತು: “ಊರೀಯನು ಗಾಯಗೊಂಡು ಸಾಯುವಂತೆ ಅವನನ್ನು ಘೋರಯುದ್ಧ ನಡೆಯುತ್ತಿರುವ ಕಡೆ, ಮುಂಭಾಗದಲ್ಲೇ ನಿಲ್ಲಿಸಿ, ನೀವು ಹಿಂದಕ್ಕೆ ಸರಿದುಕೊಳ್ಳಿ.”</verse>
				<verse number="16">ಯೋವಾಬನು ಪಟ್ಟಣಕ್ಕೆ ಮುತ್ತಿಗೆ ಹಾಕುವಾಗ ಶತ್ರುಸೈನಿಕರು ಎಲ್ಲಿ ಪ್ರಬಲರಾಗಿರುತ್ತಾರೆಂದು ಗೊತ್ತುಮಾಡಿಕೊಂಡು ಊರೀಯನನ್ನು ಅಲ್ಲಿಗೆ ಕಳುಹಿಸಿದನು.</verse>
				<verse number="17">ಆ ಊರಿನ ಜನರು ಹೊರಗೆ ಬಂದು ಯೋವಾಬನ ಸೈನ್ಯದೊಡನೆ ಹೋರಾಡಿದರು. ದಾವೀದನ ಸೇವಕರಲ್ಲಿ ಕೆಲವರು ಸತ್ತರು; ಹಿತ್ತಿಯನಾದ ಊರೀಯನೂ ಮಡಿದನು.</verse>
				<verse number="18">ಅನಂತರ ಯೋವಾಬನು ಒಬ್ಬ ದೂತನನ್ನು ಕರೆದು, “ನೀನು ಹೋಗಿ ದಾವೀದನಿಗೆ ಯುದ್ಧದ ವರದಿಯನ್ನು ಸಲ್ಲಿಸು.</verse>
				<verse number="19">ಯುದ್ಧ ವಿವರವನ್ನು ಹೇಳಿ ಮುಗಿಸಿದನಂತರ</verse>
				<verse number="20">ಅರಸರು ಸಿಟ್ಟುಗೊಂಡು ನಿನ್ನನ್ನು, ‘ನೀವು ಯುದ್ಧಮಾಡುವುದಕ್ಕಾಗಿ ಪಟ್ಟಣದ ತೀರ ಸಮೀಪಕ್ಕೆ ಹೋದದ್ದೇಕೆ? ಶತ್ರುಗಳು ಊರುಗೋಡೆಯ ಮೇಲಿನಿಂದ ಏನನ್ನಾದರೂ ಬಿಸಾಡಬಹುದಿತ್ತಲ್ಲವೇ?</verse>
				<verse number="21">ಯೆರುಬ್ಬೆಷೆತನ ಮಗನಾದ ಅಬೀಮೆಲೆಕನನ್ನು ಕೊಂದವರಾರೆಂದು ನಿಮಗೆ ಗೊತ್ತಿಲ್ಲವೇ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿಹಾಕಿ ಅವನನ್ನು ಕೊಂದಳಲ್ಲವೇ? ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?’ ಎಂದು ಕೇಳಿದರೆ ನೀನು, ‘ಹಿತ್ತಿಯನಾದ ನಿಮ್ಮ ಸೇವಕ ಊರೀಯನೂ ಮೃತನಾದನೆಂದು ಹೇಳು,’ ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು.</verse>
				<verse number="22">ಆ ದೂತನು ಹೋಗಿ ಯೋವಾಬನ ಆಜ್ಞೆಯಂತೆಯೇ ದಾವೀದನಿಗೆ ಹೀಗೆ ತಿಳಿಸಿದನು: “ಆ ಊರಿನವರು ಮಹಾಬಲದೊಡನೆ ಯುದ್ಧಮಾಡುವುದಕ್ಕೆ ಬೈಲಿಗೆ ಬಂದರು. ನಾವು ಅವರನ್ನು ಊರುಬಾಗಿಲಿನವರೆಗೂ ಹಿಂದಟ್ಟಿದೆವು.</verse>
				<verse number="23"></verse>
				<verse number="24">ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿಮ್ಮ ಸೇವಕರ ಮೇಲೆ ಬಾಣಗಳನ್ನು ಎಸೆದುದರಿಂದ ಅವರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ನಿಮ್ಮ ಸೇವಕ ಊರೀಯನೂ ಮಡಿದನು.”</verse>
				<verse number="25">ಆಗ ದಾವೀದನು ಆ ದೂತನಿಗೆ, “ನೀನು ಹೋಗಿ ಯೋವಾಬನಿಗೆ, ‘ವ್ಯಸನಪಡಬೇಕಾಗಿಲ್ಲ; ಕತ್ತಿ ಈ ದಿನ ಒಬ್ಬನನ್ನು ನುಂಗಿದರೆ ನಾಳೆ ಇನ್ನೊಬ್ಬನನ್ನು ನುಂಗುತ್ತದೆ. ಮತ್ತಷ್ಟು ಶೂರತನದಿಂದ ಯುದ್ಧಮಾಡಿ ಪಟ್ಟಣವನ್ನು ಕೆಡವಿಬಿಡಿ, ಎಂಬುದಾಗಿ ಅರಸರು ಆಜ್ಞಾಪಿಸುತ್ತಾರೆ’ ಎಂದು ಹೇಳಿ ಅವನನ್ನು ಧೈರ್ಯಪಡಿಸು,” ಎಂದನು.</verse>
				<verse number="26">ಊರೀಯನ ಮರಣವಾರ್ತೆಯನ್ನು ಅವನ ಹೆಂಡತಿ ಕೇಳಿ ಗಂಡನಿಗಾಗಿ ಅತ್ತು ಗೋಳಾಡಿದಳು.</verse>
				<verse number="27">ದುಃಖಕಾಲ ತೀರಿದನಂತರ ದಾವೀದನು ಆಕೆಯನ್ನು ತನ್ನ ಮನೆಗೆ ಕರೆಯಿಸಿ ತನ್ನ ಹೆಂಡತಿಯನ್ನಾಗಿ ಮಾಡಿಕೊಂಡನು. ಆಕೆ ಅವನಿಂದ ಒಬ್ಬ ಮಗನನ್ನು ಹೆತ್ತಳು. ದಾವೀದನ ಈ ಕೃತ್ಯ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿತ್ತು.</verse>
			</chapter>
			<chapter number="12">
				<verse number="1">ಸರ್ವೇಶ್ವರಸ್ವಾಮಿ ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದರು. ಅವನು ದಾವೀದನ ಬಳಿಗೆ ಬಂದು ಹೀಗೆಂದು ಹೇಳಿದನು: “ಒಂದು ಊರಲ್ಲಿ ಇಬ್ಬರು ವ್ಯಕ್ತಿಗಳಿದ್ದರು. ಒಬ್ಬನು ಐಶ್ವರ್ಯವಂತ, ಇನ್ನೊಬ್ಬನು ಬಡವ.</verse>
				<verse number="2">ಐಶ್ವರ್ಯವಂತನಿಗೆ ಬಹಳ ಕುರಿದನಗಳಿದ್ದವು.</verse>
				<verse number="3">ಬಡವನಿಗೆ ಒಂದು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅದೂ ಕೊಂಡು ತಂದದ್ದು. ಅದನ್ನು ಅಕ್ಕರೆಯಿಂದ ಸಾಕುತ್ತಿದ್ದ. ಅದು ದೊಡ್ಡದಾಗುವವರೆಗೆ ಮಗುವಿನಂತೆ ಅವನ ಸಂಗಡ ಹಾಗೂ ಅವನ ಮಕ್ಕಳ ಸಂಗಡವೆ ಬೆಳೆಯುತ್ತಿತ್ತು. ಅವನೊಡನೆ ರೊಟ್ಟಿ ತಿನ್ನುತ್ತಾ ಅವನ ಪಾತ್ರೆಯಲ್ಲೇ ನೀರು ಕುಡಿಯುತ್ತಾ ಇತ್ತು. ಅವನ ಎದೆಯ ಮೇಲೆಯೇ ಒರಗಿಕೊಂಡು ನಿದ್ರೆಮಾಡುತ್ತಿತ್ತು.</verse>
				<verse number="4">ಒಂದು ದಿನ ಆ ಐಶ್ವರ್ಯವಂತನ ಮನೆಗೆ ಒಬ್ಬ ಪ್ರಯಾಣಿಕ ಬಂದ. ಆಗ ತನ್ನ ಕುರಿದನಗಳಿಂದ ಏನನ್ನೂ ಕೊಲ್ಲಲು ಆ ಐಶ್ವರ್ಯವಂತನಿಗೆ ಮನಸ್ಸಿಲ್ಲದೆ ಹೋಯಿತು. ಆ ಬಡವನ ಕುರಿಮರಿಯನ್ನೇ ಹಿಡಿದುಕೊಂಡು ಅತಿಥಿಗೋಸ್ಕರ ಅಡಿಗೆ ಮಾಡಿಸಿದ.”</verse>
				<verse number="5">ಇದನ್ನು ಕೇಳಿದ್ದೇ ದಾವೀದನು ಆ ವ್ಯಕ್ತಿಯ ಮೇಲೆ ಕಡುಕೋಪಗೊಂಡು ನಾತಾನನಿಗೆ, “ಸರ್ವೇಶ್ವರನಾಣೆ, ಆ ವ್ಯಕ್ತಿ ಸಾಯಲೇ ಬೇಕು.</verse>
				<verse number="6">ಅವನು ಕರುಣೆಯಿಲ್ಲದೆ ಹೀಗೆ ಮಾಡಿದ್ದರಿಂದ ಆ ಕುರಿಮರಿಗಾಗಿ ನಾಲ್ಕರಷ್ಟು ಹಿಂದಕ್ಕೆ ಕೊಡಲೇಬೇಕು,” ಎಂದನು.</verse>
				<verse number="7">ಆಗ ನಾತಾನನು ದಾವೀದನನ್ನು ದಿಟ್ಟಿಸಿ, “ಆ ಮನುಷ್ಯ ನೀನೇ. ಇಸ್ರಯೇಲರ ದೇವರಾದ ಸರ್ವೇಶ್ವರ ನಿನಗೆ ಹೇಳುವುದು ಇದು: ‘ನಿನ್ನನ್ನು ಅಭಿಷೇಕಿಸಿ ಇಸ್ರಯೇಲರ ಅರಸನನ್ನಾಗಿ ಮಾಡಿದವನು ನಾನು; ಸೌಲನ ಕೈಗೆ ಸಿಕ್ಕದಂತೆ ತಪ್ಪಿಸಿದವನೂ ನಾನೇ.</verse>
				<verse number="8">ಇದಲ್ಲದೆ, ನಾನು ನಿನಗೆ ನಿನ್ನ ಯಜಮಾನನ ಮನೆಯನ್ನೂ ಅವನ ಮಡದಿಯರನ್ನೂ ನಿನ್ನ ಮಡಿಲಿಗೆ ಹಾಕಿದೆ. ಇಸ್ರಯೇಲ್ ಮತ್ತು ಯೆಹೂದ ಕುಲಗಳನ್ನು ನಿನ್ನ ವಶಕ್ಕೆ ಕೊಟ್ಟೆ. ಇದೂ ಸಾಲದಿದ್ದರೆ, ನಾನು ನಿನಗೆ ಇನ್ನೂ ಬೇಕಾದದ್ದನ್ನು ಕೊಡುತ್ತಿದ್ದೆ.</verse>
				<verse number="9">ಹೀಗಿರಲು, ನೀನು ಸರ್ವೇಶ್ವರನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದೇಕೆ? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡೆ.</verse>
				<verse number="10">ನೀನು ನನ್ನ ಆಜ್ಞೆಯನ್ನು ತಿರಸ್ಕರಿಸಿದೆ; ಹಾಗು ಹಿತ್ತಿಯನಾದ ಊರೀಯನನ್ನು ಅಮ್ಮೋನಿಯರ ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡೆ. ಆದ್ದರಿಂದ ಕತ್ತಿ ನಿನ್ನ ಮನೆಯನ್ನು ಬಿಟ್ಟು ತೊಲಗುವುದಿಲ್ಲ.</verse>
				<verse number="11">ಸರ್ವೇಶ್ವರನಾದ ನನ್ನ ಮಾತನ್ನು ಕೇಳು: ನಿನ್ನ ಮನೆಯವರಿಂದಲೇ ನಿನಗೆ ಕೇಡು ಉಂಟಾಗುವಂತೆ ಮಾಡುವೆನು. ನಿನ್ನ ಹೆಂಡತಿಯರನ್ನು ನಿನ್ನೆದುರಿನಲ್ಲೇ ಇನ್ನೊಬ್ಬನಿಗೆ ಕೊಡುವೆನು. ಅವನು ಹಗಲಿನಲ್ಲೇ ಅವರ ಕೂಡ ಮಲಗುವನು.</verse>
				<verse number="12">ನೀನು ಅದನ್ನು ಗುಪ್ತವಾಗಿ ಮಾಡಿದೆ. ನಾನು ಹೇಳುವ ಮಾತಾದರೋ ಇಸ್ರಯೇಲರೆಲ್ಲರ ಮುಂದೆ ಬಹಿರಂಗವಾಗಿ ನೆರವೇರುವುದು,’” ಎಂದನು.</verse>
				<verse number="13">ಆಗ ದಾವೀದನು ನಾತಾನನಿಗೆ, “ನಾನು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದೇನೆ,” ಎಂದು ಹೇಳಿದನು. ನಾತಾನನು ಅವನಿಗೆ, “ಸರ್ವೇಶ್ವರ ನಿನ್ನ ಪಾಪವನ್ನು ಕ್ಷಮಿಸಿದ್ದಾರೆ; ನೀನು ಸಾಯುವುದಿಲ್ಲ.</verse>
				<verse number="14">ಆದರೂ ನೀನು ಈ ಕೃತ್ಯದಿಂದ, ಸರ್ವೇಶ್ವರನ ವೈರಿಗಳು ಅವರನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದಕೊಟ್ಟೆ. ಆದುದರಿಂದ ನಿನ್ನಿಂದ ಹುಟ್ಟಲಿರುವ ಮಗು ಸತ್ತುಹೋಗುವುದು,”</verse>
				<verse number="15">ಎಂದು ಹೇಳಿ ಮನೆಗೆ ಹೊರಟು ಹೋದನು. ಊರೀಯನ ಹೆಂಡತಿಯಲ್ಲಿ ದಾವೀದನಿಗೆ ಹುಟ್ಟಿದ ಮಗು ಸರ್ವೇಶ್ವರನ ಶಿಕ್ಷೆಯಿಂದಾಗಿ ಬಹು ಅಸ್ವಸ್ಥವಾಯಿತು.</verse>
				<verse number="16">ಆದುದರಿಂದ ದಾವೀದನು ಮಗುವಿಗಾಗಿ ದೇವರನ್ನು ಪ್ರಾರ್ಥಿಸುತ್ತಾ ಉಪವಾಸ ಮಾಡುತ್ತಾ ಒಳಕೋಣೆಯಲ್ಲಿ ನೆಲದ ಮೇಲೆಯೇ ಬಿದ್ದುಕೊಂಡು ರಾತ್ರಿ ಕಳೆಯುತ್ತಿದ್ದ.</verse>
				<verse number="17">ಆಸ್ಥಾನದ ಅಧಿಕಾರಿಗಳು ಅವನನ್ನು ಎಬ್ಬಿಸುವುದಕ್ಕೆ ಹೋದರು. ಆದರೆ ಅವನು ಏಳಲೂ ಇಲ್ಲ, ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ.</verse>
				<verse number="18">ಏಳನೆಯ ದಿನದಲ್ಲಿ ಮಗು ಸತ್ತಿತು. ಅವನ ಸೇವಕರು ಭಯಪಟ್ಟು ಈ ವರ್ತಮಾನವನ್ನು ದಾವೀದನಿಗೆ ತಿಳಿಸಲಿಲ್ಲ. ಅವರು, “ಹುಡುಗನು ಜೀವದಿಂದಿದ್ದಾಗಲೇ ಅವರು ನಮ್ಮ ಸಂತಾಪವನ್ನು ಲಕ್ಷಿಸಲಿಲ್ಲ. ಹೀಗಿರುವಲ್ಲಿ ಮಗುವಿನ ಮರಣವಾರ್ತೆಯನ್ನು ಅವರಿಗೆ ತಿಳಿಸಿದರೆ ಅವರು ತನಗೆ ಏನಾದರೂ ಕೇಡುಮಾಡಿಕೊಂಡಾರಲ್ಲವೇ?”, ಎಂದು ಮಾತಾಡಿಕೊಳ್ಳುತ್ತಿದ್ದರು.</verse>
				<verse number="19">ಸೇವಕರು ಈ ಪ್ರಕಾರ ಗುಜುಗುಜು ಮಾತಾಡುವುದನ್ನು ದಾವೀದನು ಕಂಡು ಮಗು ಸತ್ತು ಹೋಯಿತೆಂದು ತಿಳಿದು, ಸೇವಕರನ್ನು, “ಮಗು ತೀರಿಕೊಂಡಿತೋ?,” ಎಂದು ಕೇಳಿದನು. ಅವರು “ಹೌದು, ತೀರಿಕೊಂಡಿತು,” ಎಂದು ಉತ್ತರಕೊಟ್ಟರು.</verse>
				<verse number="20">ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಸರ್ವೇಶ್ವರನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು.</verse>
				<verse number="21">ಇದನ್ನು ನೋಡಿದ ಸೇವಕರು ಅವನಿಗೆ, “ಇದೇನು ನೀವು ಮಾಡಿದ್ದು? ಹುಡುಗ ಜೀವದಿಂದಿದ್ದಾಗ ಅಳುತ್ತಾ ಉಪವಾಸವಾಗಿದ್ದಿರಿ. ಹುಡುಗ ಸತ್ತ ನಂತರ ಎದ್ದು ಊಟಮಾಡಿದಿರಿ!” ಎಂದರು.</verse>
				<verse number="22">ದಾವೀದನು ಅವರಿಗೆ, “ಹುಡುಗ ಜೀವದಿಂದಿದ್ದಾಗ ಒಂದು ವೇಳೆ ಸರ್ವೇಶ್ವರ ಕೃಪೆಮಾಡಿ ಅವನನ್ನು ಉಳಿಸಾರು ಎಂದುಕೊಂಡು ಉಪವಾಸ ಮಾಡಿದೆ, ಕಣ್ಣೀರಿಟ್ಟೆ.</verse>
				<verse number="23">ಈಗ ಸತ್ತಿದ್ದಾನೆ ಅಲ್ಲವೆ? ನಾನೇಕೆ ಉಪವಾಸ ಮಾಡಬೇಕು? ಅವನನ್ನು ಹಿಂದಕ್ಕೆ ತರಲು ನನ್ನಿಂದಾದೀತೇ? ನಾನಾಗಿ ಅವನ ಬಳಿಗೆ ಹೋಗಬೇಕೇ ಹೊರತು ಅವನು ನನ್ನ ಬಳಿಗೆ ಬರುವುದಿಲ್ಲ,” ಎಂದು ಉತ್ತರಕೊಟ್ಟನು.</verse>
				<verse number="24">ದಾವೀದನು ತನ್ನ ಹೆಂಡತಿ ಬತ್ಷೆಬೆಯ ಬಳಿಗೆ ಹೋಗಿ ಆಕೆಯನ್ನು ಸಂತೈಸಿ ಆಕೆಯ ಸಂಗಡ ಮಲಗಿದನು. ಆಕೆ ಮಗನನ್ನು ಹೆತ್ತಾಗ ಅವನಿಗೆ ಸೊಲೊಮೋನೆಂದು ಹೆಸರಿಟ್ಟನು. ಸರ್ವೇಶ್ವರಸ್ವಾಮಿ ಆ ಹುಡುಗನನ್ನು ಪ್ರೀತಿಸಿದರು;</verse>
				<verse number="25">ಪ್ರವಾದಿ ನಾತಾನನು, ಸರ್ವೇಶ್ವರನಿಂದ ಪಡೆದ ಆಜ್ಞೆಯಂತೆ ಅವರಿಗೋಸ್ಕರ, ಆ ಹುಡುಗನಿಗೆ ‘ಯೆದೀದ್ಯ’ ಎಂದು ಹೆಸರಿಟ್ಟನು.</verse>
				<verse number="26">ಯೋವಾಬನು ಅಮ್ಮೋನಿಯರ ಪಟ್ಟಣವಾದ ರಬ್ಬಕ್ಕೆ ಮುತ್ತಿಗೆ ಹಾಕಿದನು. ಅರಮನೆ ಇದ್ದ ಭಾಗವನ್ನು ಸ್ವಾಧೀನಮಾಡಿಕೊಂಡನು.</verse>
				<verse number="27">ದಾವೀದನಿಗೆ ದೂತರ ಮುಖಾಂತರ, “ನಾನು ರಬ್ಬಕ್ಕೆ ಮುತ್ತಿಗೆಹಾಕಿ ನೀರು ಪೂರೈಕೆಯ ಭಾಗವನ್ನು ಸ್ವಾಧೀನಮಾಡಿಕೊಂಡಿದ್ದೇನೆ.</verse>
				<verse number="28">ನೀವು ಉಳಿದ ಸೈನ್ಯವನ್ನು ಬೇಗನೆ ಕೂಡಿಸಿಕೊಂಡು ಬಂದು ಪಟ್ಟಣಕ್ಕೆ ಮುತ್ತಿಗೆಹಾಕಿ ಉಳಿದ ಭಾಗವನ್ನು ಸ್ವಾಧೀನಪಡಿಸಿಕೊಳ್ಳಿ; ಅದನ್ನು ನಾನೇ ಹಿಡಿದುಕೊಂಡೆನೆಂಬ ಕೀರ್ತಿ ನನಗೆ ಬೇಡ,” ಎಂದು ಹೇಳಿಕಳುಹಿಸಿದನು.</verse>
				<verse number="29">ಆಗ ದಾವೀದನು ಜನರೆಲ್ಲರನ್ನೂ ಕೂಡಿಸಿಕೊಂಡು ಹೋಗಿ ರಬ್ಬಕ್ಕೆ ಮುತ್ತಿಗೆಹಾಕಿ ಅದನ್ನು ವಶಮಾಡಿಕೊಂಡನು.</verse>
				<verse number="30">ಇದಲ್ಲದೆ ಅವನು ಅವರ ಮಲ್ಕಾಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು; ಅದು ಮೂವತ್ತೈದು ಕಿಲೊಗ್ರಾಂ ತೂಕದ್ದು. ಅದರಲ್ಲಿದ್ದ ರತ್ನವನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಆ ಪಟ್ಟಣದಿಂದ ದೊಡ್ಡ ಕೊಳ್ಳೆಯನ್ನು ಒಯ್ದನು.</verse>
				<verse number="31">ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಕೆಲಸ ಮಾಡುವುದಕ್ಕೂ ಇಟ್ಟಿಗೆಗಳನ್ನು ಸುಡುವುದಕ್ಕೂ ಹಚ್ಚಿದನು. ಅಮ್ಮೋನಿಯರ ಉಳಿದೆಲ್ಲ ಪಟ್ಟಣದವರಿಗೂ ಇದೇ ಗತಿ ಆಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಜೆರುಸಲೇಮಿಗೆ ಮರಳಿದನು.</verse>
			</chapter>
			<chapter number="13">
				<verse number="1">ದಾವೀದನ ಮಗನಾದ ಅಬ್ಷಾಲೋಮನಿಗೆ ತಾಮಾರಳೆಂಬ ಬಹು ಚೆಲುವೆಯಾದ ತಂಗಿಯಿದ್ದಳು. ದಾವೀದನ ಮಗ ಅಮ್ನೋನನು ಆಕೆಯನ್ನು ಮೋಹಿಸಿದನು.</verse>
				<verse number="2">ಅವನು ಆಕೆಯ ಮೇಲಿನ ಮೋಹದಿಂದ ಪೀಡಿತನಾಗಿ ಅಸ್ವಸ್ಥನಾದನು. ಆಕೆ ಕನ್ಯೆ ಆಗಿದ್ದುದರಿಂದ ಆಕೆಗೆ ಏನು ಮಾಡುವುದೂ ಅಸಾಧ್ಯವೆಂದು ಅಮ್ನೋನನಿಗೆ ಕಂಡಿತು.</verse>
				<verse number="3">ಅವನಿಗೆ ಯೋನಾದಾಬನೆಂಬ ಒಬ್ಬ ಗೆಳೆಯನಿದ್ದನು. ಇವನು ದಾವೀದನ ಅಣ್ಣನಾದ ಶಿಮ್ಮನ ಮಗ ಹಾಗು ಬಹು ಯುಕ್ತಿವಂತ.</verse>
				<verse number="4">ಅವನು ಒಂದು ದಿನ ಅಮ್ನೋನನನ್ನು, “ರಾಜಪುತ್ರರೇ, ನೀವು ದಿನೇದಿನೇ ಕ್ಷೀಣವಾಗುತ್ತಾ ಬರುವುದೇಕೆ? ನನಗೆ ತಿಳಿಸಬಾರದೇ?,” ಎಂದು ಕೇಳಿದನು. ಅವನು, “ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹವುಂಟಾಗಿದೆ,” ಎಂದು ಉತ್ತರಕೊಟ್ಟನು.</verse>
				<verse number="5">ಆಗ ಯೋನಾದಾಬನು, “ನೀನು ಅಸ್ವಸ್ಥನಾದವನಂತೆ ನಟಿಸಿ ಹಾಸಿಗೆಯ ಮೇಲೆ ಮಲಗಿಕೋ; ನಿನ್ನ ತಂದೆ ನಿನ್ನನ್ನು ನೋಡುವುದಕ್ಕೆ ಬಂದಾಗ, ‘ದಯವಿಟ್ಟು ನನ್ನ ತಂಗಿ ತಾಮಾರಳನ್ನು ನನಗಾಗಿ ಆಹಾರ ಸಿದ್ಧಮಾಡುವುದಕ್ಕೆ ಕಳುಹಿಸಿ. ಆಕೆ ನನ್ನೆದುರಿನಲ್ಲೇ ಸಿದ್ಧಮಾಡಿಕೊಡುವುದಾದರೆ ಊಟಮಾಡುತ್ತೇನೆ’ ಎಂದು ಹೇಳು,” ಎಂದನು.</verse>
				<verse number="6">ಅಮ್ನೋನನು ಅಸ್ವಸ್ಥನಾದವನೋ ಎಂಬಂತೆ ಮಲಗಿಕೊಂಡನು. ಅರಸನು ಅವನನ್ನು ನೋಡುವುದಕ್ಕೆ ಬಂದಾಗ ಅವನು ಅರಸನಿಗೆ, “ದಯವಿಟ್ಟು ನನ್ನ ತಂಗಿ ತಾಮಾರಳನ್ನು ನನ್ನ ಬಳಿಗೆ ಕಳುಹಿಸಿ; ಆಕೆ ನನ್ನ ಕಣ್ಮುಂದೆಯೇ ಒಂದೆರಡು ಭಕ್ಷ್ಯಗಳನ್ನು ಮಾಡಿಕೊಡುವುದಾದರೆ ಊಟಮಾಡುತ್ತೇನೆ,” ಎಂದು ಬೇಡಿಕೊಂಡನು.</verse>
				<verse number="7">ದಾವೀದನು ಅರಮನೆಗೆ ಆಳುಗಳನ್ನು ಕಳುಹಿಸಿ ಆಕೆಗೆ, “ನೀನು ನಿನ್ನ ಅಣ್ಣ ಅಮ್ನೋನನ ಮನೆಗೆ ಹೋಗಿ ಅವನಿಗಾಗಿ ಆಹಾರವನ್ನು ಸಿದ್ಧಮಾಡು,” ಎಂದು ಹೇಳಿಸಿದನು.</verse>
				<verse number="8">ಕೂಡಲೆ ಆಕೆ ತನ್ನ ಅಣ್ಣನಾದ ಅಮ್ನೋನನ ಮನೆಗೆ ಹೋದಳು; ಅವನು ಮಲಗಿದ್ದನು. ಆಕೆ ಹೋಗಿ ಹಿಟ್ಟು ತೆಗೆದುಕೊಂಡು ನಾದಿ ಅವನ ಕಣ್ಮುಂದೆಯೇ ಭಕ್ಷ್ಯಗಳನ್ನು ಮಾಡಿ ಸುಟ್ಟಳು.</verse>
				<verse number="9">ಅನಂತರ ಆಕೆ ಅವುಗಳನ್ನು ಬಾಣಲಿಯಿಂದ ತೆಗೆದು ಅವನ ಮುಂದಿಟ್ಟಳು. ಅವನು ಊಟಮಾಡದೆ ಎಲ್ಲಾ ಜನರನ್ನು ತನ್ನ ಬಳಿಯಿಂದ ಹೊರಡಿಸಬೇಕೆಂದು ಅಪ್ಪಣೆ ಮಾಡಿದನು.</verse>
				<verse number="10">ಎಲ್ಲರೂ ಹೋದಮೇಲೆ ಅವನು ತಾಮಾರಳಿಗೆ, “ಆಹಾರವನ್ನು ಈ ಕೋಣೆಗೆ ತೆಗೆದುಕೊಂಡು ಬಾ, ನೀನಾಗಿ ತಂದುಕೊಟ್ಟರೆ ಊಟಮಾಡುತ್ತೇನೆ!” ಎಂದು ಹೇಳಿದನು. ಆಗ ತಾಮಾರಳು ತಾನು ಮಾಡಿದ ಭಕ್ಷ್ಯಗಳನ್ನು ಅಣ್ಣನಾದ ಅಮ್ನೋನನಿದ್ದ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮುಂದಿಟ್ಟಳು.</verse>
				<verse number="11">ಕೂಡಲೇ ಅವನು ಆಕೆಯನ್ನು ಹಿಡಿದು, “ನನ್ನ ತಂಗೀ, ಬಂದು ನನ್ನ ಸಂಗಡ ಮಲಗಿಕೋ,” ಎಂದನು.</verse>
				<verse number="12">ಆಕೆ, “ಅಣ್ಣಾ, ಬೇಡ; ನನ್ನನ್ನು ಕೆಡಿಸಬೇಡ; ಇಸ್ರಯೇಲರಲ್ಲಿ ಇಂಥದು ನಡೆಯಬಾರದು.</verse>
				<verse number="13">ಇಂಥ ಹುಚ್ಚುತನ ಬೇಡ, ಈ ಅವಮಾನವನ್ನು ಮರೆಮಾಡುವುದು ಹೇಗೆ? ನಿನಗಂತೂ ಇಸ್ರಯೇಲರಲ್ಲಿ ನೀಚನೆಂಬ ಹೆಸರು ತಪ್ಪದು. ಆದುದರಿಂದ ದಯವಿಟ್ಟು ಅರಸನ ಸಂಗಡ ಮಾತಾಡು. ಅವನು ನನ್ನನ್ನು ನಿನಗೆ ಕೊಡದಿರಲಾರನು,” ಎಂದಳು.</verse>
				<verse number="14">ಆದರೆ ಅವನು ಆಕೆಯ ಮಾತನ್ನು ಕೇಳದೆ ಬಲಾತ್ಕಾರದಿಂದ ಆಕೆಯನ್ನು ಕೆಡಿಸಿದನು.</verse>
				<verse number="15">ಇದಾದ ಮೇಲೆ ಅವನಿಗೆ ಆಕೆಯಲ್ಲಿ ತುಂಬಾ ದ್ವೇಷ ಹುಟ್ಟಿತು. ಅವನ ಮುಂಚಿನ ಪ್ರೀತಿಗಿಂತ ದ್ವೇಷವೇ ಹೆಚ್ಚಾಯಿತು.</verse>
				<verse number="16">ಅಮ್ನೋನನು ಆಕೆಗೆ, “ಎದ್ದುಹೋಗು,” ಎಂದು ಹೇಳಿದಾಗ ಆಕೆ, “ಹಾಗೆ ಮಾಡಬೇಡ, ನನ್ನನ್ನು ಹೊರಡಿಸಿಬಿಡುವುದು ನೀನು ಮಾಡಿದ ಮೊದಲನೆಯ ಅನ್ಯಾಯಕ್ಕಿಂತ ಹೆಚ್ಚಿನ ಅನ್ಯಾಯವಾಗಿದೆ,” ಎಂದಳು.</verse>
				<verse number="17">ಆದರೆ ಅವನು ಆಕೆಯ ಮಾತನ್ನು ಕೇಳದೆ ಯಾವಾಗಲೂ ತನ್ನ ಹತ್ತಿರವೇ ಇರುವಂಥ ಆಳನ್ನು ಕರೆದು ಅವನಿಗೆ, “ಇವಳನ್ನು ಹೊರಗೆ ತಳ್ಳಿ ಕದಮುಚ್ಚು,” ಎಂದು ಆಜ್ಞಾಪಿಸಿದನು.</verse>
				<verse number="18">(ಆಕೆ ನಾನಾ ವರ್ಣಗಳುಳ್ಳ ಒಂದು ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ಕನ್ಯೆಯರಾದ ರಾಜಪುತ್ರಿಯರು ಅದೇ ತರದ ವಸ್ತ್ರಗಳನ್ನು ಹಾಕಿಕೊಳ್ಳುತ್ತಿದ್ದರು.) ಸೇವಕನು ಆಕೆಯನ್ನು ಹೊರಗೆ ಕಳುಹಿಸಿ ಕದಮುಚ್ಚಿದನು.</verse>
				<verse number="19">ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು, ನಿಲುವಂಗಿಯನ್ನು ಹರಿದುಕೊಂಡು, ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು.</verse>
				<verse number="20">ಆಕೆಯ ಸಹೋದರನಾದ ಅಬ್ಷಾಲೋಮನು ಆಕೆಯನ್ನು ಕಂಡು, “ನಿನ್ನ ಅಣ್ಣ ಅಮ್ನೋನನು ನಿನ್ನ ಮಾನಭಂಗ ಮಾಡಿದನೇ? ನನ್ನ ತಂಗೀ, ತಕ್ಷಣಕ್ಕೆ ಸುಮ್ಮನಿರು; ಅವನು ನಿನ್ನ ಅಣ್ಣನಲ್ಲವೇ? ಈ ವಿಷಯವನ್ನು ಮನಸ್ಸಿಗೆ ಹಚ್ಚಿಕೊಳ್ಳಬೇಡ,” ಎಂದು ಹೇಳಿದನು. ತಾಮಾರಳು ಒಂಟಿಗಳಾಗಿ ತನ್ನ ಅಣ್ಣನಾದ ಅಬ್ಷಾಲೋಮನ ಮನೆಯಲ್ಲೇ ವಾಸಿಸಿದಳು.</verse>
				<verse number="21">ಅರಸನಾದ ದಾವೀದನು ಈ ಸಂಗತಿಯನ್ನು ಕೇಳಿ ಬಹಳವಾಗಿ ಕೋಪಗೊಂಡನು.</verse>
				<verse number="22">ಅಬ್ಷಾಲೋಮನು ಅಮ್ನೋನನ ಸಂಗಡ ಒಳ್ಳೇಮಾತನ್ನಾಗಲಿ ಕೆಟ್ಟಮಾತನ್ನಾಗಲಿ ಆಡಲಿಲ್ಲ. ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅವನು ಅಮ್ನೋನನನ್ನು ದ್ವೇಷಿಸಿದನು.</verse>
				<verse number="23">ಎರಡು ವರ್ಷಗಳಾದ ನಂತರ ಅಬ್ಷಾಲೋಮನು ಒಂದು ದಿನ ಎಫ್ರಯಿಮನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವ ವ್ಯವಸ್ಥೆಮಾಡಿದನು. ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಆಮಂತ್ರಿಸಿದನು.</verse>
				<verse number="24">ಅವನು ಅರಸನ ಬಳಿಗೂ ಹೋಗಿ, “ಅರಸರೇ, ತಮ್ಮ ಸೇವಕನಾದ ನಾನು ಕುರಿಗಳ ಉಣ್ಣೆಕತ್ತರಿಸುವವರನ್ನು ಕರೆಸಿದ್ದೇನೆ. ಅರಸನು ತಮ್ಮ ಸೇವಕರ ಸಮೇತ ಅಲ್ಲಿಗೆ ಚಿತ್ತೈಸೋಣವಾಗಲಿ,” ಎಂದು ಬೇಡಿಕೊಂಡನು.</verse>
				<verse number="25">ಅರಸನು, “ಮಗನೇ, ಬೇಡ; ನಾವೆಲ್ಲರೂ ಬಂದರೆ ನಿನಗೆ ಕಷ್ಟವಾಗುವುದು,” ಎನ್ನಲು ಅಬ್ಷಾಲೋಮನು ಅವನನ್ನು ಬಹಳವಾಗಿ ಒತ್ತಾಯಪಡಿಸಿದನು. ಆದರೂ ಅರಸನು ಒಪ್ಪಲಿಲ್ಲ; ಅವನನ್ನು ಆಶೀರ್ವದಿಸಿದನು, ಅಷ್ಟೇ.</verse>
				<verse number="26">ಆಗ ಅಬ್ಷಾಲೋಮನು, “ನೀವು ಬಾರದಿದ್ದರೆ ನನ್ನ ಅಣ್ಣನಾದ ಅಮ್ನೋನನನ್ನು ನನ್ನೊಡನೆ ಕಳುಹಿಸಿ,” ಎಂದನು. ಅದಕ್ಕೆ ಅರಸನು, “ಅವನೇಕೆ ನಿನ್ನ ಸಂಗಡ ಬರಬೇಕು?” ಎಂದು ಕೇಳಿದನು.</verse>
				<verse number="27">ಆದರೂ ಅಬ್ಷಾಲೋಮನು ಬಹಳವಾಗಿ ಒತ್ತಾಯಪಡಿಸಿದ್ದರಿಂದ ಅರಸನು ಅಮ್ನೋನನನ್ನೂ ತನ್ನ ಬೇರೆ ಎಲ್ಲಾ ಮಕ್ಕಳನ್ನೂ ಕಳುಹಿಸಿದನು.</verse>
				<verse number="28">ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದಕೂಡಲೆ ಅವನನ್ನು ಹೊಡೆದು ಕೊಂದುಹಾಕಿ; ಹೆದರಬೇಡಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೆ? ಧೈರ್ಯದಿಂದಿರಿ, ಶೂರರಾಗಿರಿ,” ಎಂದು ಹೇಳಿದ್ದನು.</verse>
				<verse number="29">ಅಬ್ಷಾಲೋಮನ ಆಳುಗಳು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು.</verse>
				<verse number="30">ಅವರು ಇನ್ನೂ ಮಾರ್ಗದಲ್ಲಿರುವಾಗಲೇ ದಾವೀದನಿಗೆ, “ಅಬ್ಷಾಲೋಮನು ರಾಜಪುತ್ರರೆಲ್ಲರನ್ನೂ ಕೊಂದುಹಾಕಿದನು. ಒಬ್ಬನನ್ನೂ ಉಳಿಸಲಿಲ್ಲ,” ಎಂಬ ಸುದ್ದಿ ಮುಟ್ಟಿತು.</verse>
				<verse number="31">ಆಗ ಅರಸನು ದುಃಖತಾಳಲಾರದೆ ತನ್ನ ಬಟ್ಟೆಗಳನ್ನು ಹರಿದುಕೊಂಡು ನೆಲಕ್ಕೆ ಬಿದ್ದನು. ಅವನ ಸೇವಕರೆಲ್ಲರೂ ತಮ್ಮ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅವನ ಹತ್ತಿರ ನಿಂತರು.</verse>
				<verse number="32">ಆಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ, “ರಾಜಪುತ್ರರೆಲ್ಲರನ್ನೂ ಕೊಂದುಹಾಕಿದ್ದಾರೆಂದು ನನ್ನ ಒಡೆಯರು ನೆನೆಸದಿರಲಿ. ಅಮ್ನೋನನೊಬ್ಬನೇ ಸತ್ತಿರಬೇಕು. ಅವನು ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಕೆಡಿಸಿದಾಗಿನಿಂದಲೇ ಹೀಗಾಗುವುದೆಂದು ಅಬ್ಷಾಲೋಮನ ಮುಖದಿಂದ ತೋರುತ್ತಿತ್ತು.</verse>
				<verse number="33">ಆದುದರಿಂದ ರಾಜಪುತ್ರರೆಲ್ಲರೂ ಸತ್ತರೆಂಬ ಸುದ್ದಿಗೆ ಅರಸರು ಲಕ್ಷ್ಯಕೊಡದಿರಲಿ; ಅಮ್ನೋನನೊಬ್ಬನೇ ಸತ್ತಿದ್ದಾನಷ್ಟೆ,” ಎಂದು ಹೇಳಿ ಸಂತೈಸಿದನು.</verse>
				<verse number="34">(ಅಬ್ಷಾಲೋಮನು ತಲೆ ತಪ್ಪಿಸಿಕೊಂಡನು.) ಅಷ್ಟರಲ್ಲಿ ದಾರಿ ನೋಡುತ್ತಿದ್ದ ಕಾವಲುಗಾರನು ಒಂದು ದೊಡ್ಡ ಗುಂಪು ಹೋರೋನಿನ ಮಾರ್ಗವಾಗಿ ಗುಡ್ಡ ಇಳಿದುಬರುವುದನ್ನು ಕಂಡನು.</verse>
				<verse number="35">ಯೋನಾದಾಬನು ಅರಸನಿಗೆ, “ಇಗೋ, ರಾಜಕುಮಾರರು ಬರುತ್ತಿದ್ದಾರೆ; ನಿಮ್ಮ ಸೇವಕನ ಮಾತಿನಂತೆಯೇ ಆಯಿತಲ್ಲವೇ,” ಎಂದು ಹೇಳಿ ಮುಗಿಸುವಷ್ಟರಲ್ಲೇ</verse>
				<verse number="36">ರಾಜಕುಮಾರರು ಬಂದು ಗಟ್ಟಿಯಾಗಿ ಅಳತೊಡಗಿದರು. ಅರಸನೂ ಅವನ ಸೇವಕರೂ ಬಹಳವಾಗಿ ಗೋಳಾಡಿದರು.</verse>
				<verse number="37">ದಾವೀದನು ತನ್ನ ಮಗನಿಗೋಸ್ಕರ ನಿತ್ಯವೂ ದುಃಖಪಡುತ್ತಿದ್ದನು. ಅಬ್ಷಾಲೋಮನು ತಪ್ಪಿಸಿಕೊಂಡು ಗೆಷೂರಿಗೆ ಓಡಿಹೋಗಿ ಅಲ್ಲಿನ ಅರಸನೂ ಅಮ್ಮೀಹೂದನ ಮಗನೂ ಆದ ತಲ್ಮೈಯ ಬಳಿಯಲ್ಲಿ ಮೂರು ವರ್ಷ ಇದ್ದನು.</verse>
				<verse number="38"></verse>
				<verse number="39">ಅರಸ ದಾವೀದನು, ಅಮ್ನೋನನ ಸಾವಿನ ದುಃಖ ಶಮನವಾದ ಮೇಲೆ ತನ್ನ ಮಗ ಅಬ್ಷಾಲೋಮನನ್ನು ನೋಡಲು ಹಾತೊರೆಯತೊಡಗಿದನು.</verse>
			</chapter>
			<chapter number="14">
				<verse number="1">ಅರಸನು ಅಬ್ಷಾಲೋಮನಿಗಾಗಿ ಹಂಬಲಿಸುತ್ತಿರುವುದು ಚೆರೂಯಳ ಮಗನಾದ ಯೋವಾಬನಿಗೆ ತಿಳಿಯಿತು.</verse>
				<verse number="2">ಅವನು ತೆಕೋವದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆಕಳುಹಿಸಿ ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹುದಿವಸಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ನಟಿಸಿ ಶೋಕವಸ್ತ್ರಗಳನ್ನು ಧರಿಸಿಕೋ;</verse>
				<verse number="3">ಎಣ್ಣೆ ಹಚ್ಚಿಕೊಳ್ಳದೆ ಅರಸನ ಬಳಿಗೆ ಹೋಗು; ಅಲ್ಲಿ ಈ ಮಾತುಗಳನ್ನು ಅವನಿಗೆ ಹೇಳು,” ಎಂದು ಆಜ್ಞಾಪಿಸಿ ಹೇಳಬೇಕಾದ ಮಾತುಗಳನ್ನು ಆಕೆಗೆ ಕಲಿಸಿಕೊಟ್ಟನು.</verse>
				<verse number="4">ತೆಕೋವದ ಆ ಸ್ತ್ರೀ ಅರಸನ ಹತ್ತಿರಕ್ಕೆ ಹೋಗಿ ಅವನ ಮುಂದೆ ನೆಲಕ್ಕೆಬಿದ್ದು, “ಅರಸರೇ, ರಕ್ಷಿಸಿರಿ,” ಎಂದು ಕೂಗಿದಳು.</verse>
				<verse number="5">ಅರಸನು, “ನಿನಗೇನಾಯಿತು?” ಎಂದು ಆಕೆಯನ್ನು ಕೇಳಿದನು. ಆಕೆ, “ನಾನು ವಿಧವೆ; ಗಂಡನು ಸತ್ತುಹೋಗಿದ್ದಾನೆ.</verse>
				<verse number="6">ನಿನ್ನ ದಾಸಿಯಾದ ನನಗೆ ಇಬ್ಬರು ಮಕ್ಕಳಿದ್ದರು. ಒಂದು ದಿವಸ ಇವರು ಇಬ್ಬರೂ ಹೊಲದಲ್ಲಿ ಜಗಳವಾಡಿದರು. ಅಲ್ಲಿ ಬಿಡಿಸುವವರಾರೂ ಇರಲಿಲ್ಲ. ಆದುದರಿಂದ ಒಬ್ಬನು ಇನ್ನೊಬ್ಬನನ್ನು ಹೊಡೆದು ಕೊಂದನು.</verse>
				<verse number="7">ಈಗ ನೋಡಿ, ಬಳಗದವರೆಲ್ಲರು ನಿನ್ನ ದಾಸಿಯಾದ ನನಗೆ ವಿರೋಧವಾಗಿದ್ದಾರೆ; ‘ತಮ್ಮನನ್ನು ಕೊಂದವನೆಲ್ಲಿ? ಅವನನ್ನು ನಮಗೆ ಒಪ್ಪಿಸು; ತಮ್ಮನ ಪ್ರಾಣಕ್ಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥವಿಲ್ಲದ ಹಾಗೆ ಮಾಡಿಬಿಡುತ್ತೇವೆ,’ ಎನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಭೂಲೋಕದ ಮೇಲಿನಿಂದ ಅಳಿಸಬೇಕೆಂದು ಇದ್ದಾರೆ,” ಎಂದು ಉತ್ತರಕೊಟ್ಟಳು.</verse>
				<verse number="8">ಆಗ ಅರಸನು, “ಮನೆಗೆ ಹೋಗು, ನಿನ್ನ ವಿಷಯದಲ್ಲಿ ಆಜ್ಞಾಪಿಸುತ್ತೇನೆ,” ಎಂದು ಹೇಳಿದನು.</verse>
				<verse number="9">ಅದಕ್ಕೆ ಆ ತೆಕೋವದ ಸ್ತ್ರೀ, “ಅರಸರೇ, ಒಡೆಯರೇ, ಅಪರಾಧ ನನ್ನ ಮೇಲೆಯೂ ನನ್ನ ಕುಟುಂಬದ ಮೇಲೆಯೂ ಇರಲಿ; ಅರಸರಿಗೂ ಅವರ ಸಿಂಹಾಸನಕ್ಕೂ ದೋಷಹತ್ತದಿರಲಿ,” ಎಂದಳು.</verse>
				<verse number="10">ಅರಸ ಆಕೆಗೆ, “ಹಾಗೆ ಅಂದವರನ್ನು ನನ್ನ ಬಳಿಗೆ ಕರೆದುಕೊಂಡು ಬಾ; ಅವರು ನಿನ್ನನ್ನು ಮುಟ್ಟದಂತೆ ಮಾಡುತ್ತೇನೆ,” ಎಂದನು.</verse>
				<verse number="11">ಆಗ ಆ ಸ್ತ್ರೀ, “ಸಮೀಪ ಬಂಧುವು ನನ್ನ ಎರಡನೆಯ ಮಗನನ್ನು ಕೊಂದು ನನ್ನ‍ನ್ನು ಪೂರ್ಣವಾಗಿ ಹಾಳುಮಾಡದಂತೆ ಅರಸರು ತಾವಾಗಿ ನೋಡಿಕೊಳ್ಳುವರೆಂಬುದಾಗಿ ನನ್ನ ದೇವರಾದ ಸರ್ವೇಶ್ವರನ ಮೇಲೆ ಆಣೆಯಿಟ್ಟು ಪ್ರಮಾಣ ಮಾಡಬೇಕು,” ಎಂದು ಬೇಡಿಕೊಂಡಳು. ಅದಕ್ಕೆ ದಾವೀದನು, “ಸರ್ವೇಶ್ವರನಾಣೆ, ನಿನ್ನ ಮಗನ ತಲೆಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳ್ಗೊಡುವುದಿಲ್ಲ,” ಎಂದು ಹೇಳಿದನು.</verse>
				<verse number="12">ಆಗ ಆ ಸ್ತ್ರೀ, “ನನ್ನ ಒಡೆಯರಿಗೆ ಇನ್ನೊಂದು ಮಾತನ್ನು ಹೇಳಿಕೊಳ್ಳುವುದಕ್ಕೆ ಅಪ್ಪಣೆಯಾಗಲಿ,” ಎಂದಳು. ಅರಸನು, “ಹೇಳು,” ಎಂದನು.</verse>
				<verse number="13">ಆಕೆ, “ಅರಸರು ಈ ತೀರ್ಪು ಕೊಟ್ಟದ್ದರಿಂದ ತಮ್ಮನ್ನೇ ಅಪರಾಧಿಯೆಂದು ನಿರ್ಣಯಿಸಿದ ಹಾಗಾಯಿತು. ತಾವು ಹೊರದೂಡಲಾದವನನ್ನು ಸೇರಿಸಿಕೊಳ್ಳಲೊಲ್ಲದೆ ಇರುವುದರಿಂದ ದೇವಪ್ರಜೆಗೆ ವಿರೋಧ ಆಗಿ ಅದೇ ಆಲೋಚನೆ ಮಾಡಿದ ಹಾಗಾಯಿತು. ಅರಸರು ಹೀಗೇಕೆ ಮಾಡಬೇಕು? ನಾವು ಸಾಯುವವರು:</verse>
				<verse number="14">ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನಂತೆ ಇದ್ದೇವೆ ನಾವು. ಮನುಷ್ಯರ ಪ್ರಾಣತೆಗೆಯುವುದಕ್ಕೆ ದೇವರಿಗೆ ಇಷ್ಟ ಇಲ್ಲ; ಹೊರದೂಡಲಾದವನು ತಿರುಗಿ ಬಳಿಗೆ ಬರುವ ಹಾಗೆ ಅವರು ಸದುಪಾಯಗಳನ್ನು ಕಲ್ಪಿಸುವವರಾಗಿರುತ್ತಾರೆ.</verse>
				<verse number="15">ಅದಿರಲಿ, ತಮ್ಮ ಸೇವಕಿ ಆದ ನನ್ನನ್ನು ಜನರು ಹೆದರಿಸಿದ್ದರಿಂದ ನಾನು ಈ ಸಂಗತಿಯನ್ನು ಅರಸರಿಗೆ ತಿಳಿಸಿದರೆ ಅವರು ತಮ್ಮ ಸೇವಕಿಯ ಬಿನ್ನಹವನ್ನು ಆಲಿಸಾರು ಎಂದುಕೊಂಡು ನನ್ನ ಒಡೆಯರಾದ ಅರಸರಿಗೆ ಇದನ್ನು ತಿಳಿಸುವುದಕ್ಕೆ ಬಂದೆ.</verse>
				<verse number="16">ಅರಸರು ತಮ್ಮ ಸೇವಕಿಯಾದ ನನ್ನ ಬಿನ್ನಹವನ್ನು ಆಲಿಸಿ, ನನ್ನನ್ನೂ ನನ್ನ ಮಗನನ್ನೂ ದೇವರ ಸ್ವಾಸ್ತ್ಯದಿಂದ ತೆಗೆದು ಹಾಕಬೇಕೆಂದಿರುವವರ ಕೈಗೆ ಸಿಕ್ಕದಂತೆ, ತಪ್ಪಿಸಿ ರಕ್ಷಿಸುವಿರೆಂದು ನಂಬಿಕೊಂಡಿದ್ದೇನೆ.</verse>
				<verse number="17">ನನ್ನ ಒಡೆಯರಾದ ಅರಸರ ಮಾತು ಸಮಾಧಾನಕ್ಕೆ ಕಾರಣವಾಗುವುದೆಂದು ನೆನಸಿ ನಿಮ್ಮ ದಾಸಿಯಾದ ನಾನು ಬಂದೆ. ನ್ಯಾಯ ಅನ್ಯಾಯಗಳನ್ನು ಕಂಡು ಹಿಡಿಯುವುದರಲ್ಲಿ ನನ್ನ ಒಡೆಯರಾದ ಅರಸರು ದೇವದೂತನಂತೆ ಇರುತ್ತೀರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇರಲಿ!” ಎಂದಳು.</verse>
				<verse number="18">ಆಗ ಅರಸನು ಆ ಸ್ತ್ರೀಗೆ, “ನಾನು ನಿನ್ನನ್ನು ಒಂದು ಮಾತು ಕೇಳಬೇಕೆಂದಿರುತ್ತೇನೆ; ನೀನು ಅದನ್ನು ಮರೆಮಾಡದೆ ತಿಳಿಸಬೇಕು,” ಎಂದು ಹೇಳಿದನು. ಆಕೆ, “ಅರಸರ ಅಪ್ಪಣೆಯಾಗಲಿ,” ಎಂದು ಉತ್ತರಕೊಟ್ಟಳು.</verse>
				<verse number="19">ಅರಸನು, “ಈ ಕಾರ್ಯದಲ್ಲಿ ಯೋವಾಬನ ಕೈಯಿರುತ್ತದೆ ಅಲ್ಲವೇ?’ ಎಂದು ಕೇಳಿದನು. ಅದಕ್ಕೆ ಆ ಸ್ತ್ರೀ, “ಅರಸರ ಜೀವದಾಣೆ, ಅರಸರು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ ಬಲಕ್ಕಾಗಲಿ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ; ನಿಮ್ಮ ದಾಸಿಯಾದ ನನ್ನನ್ನು ಪ್ರೇರಿಸಿ ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿಕೊಟ್ಟವರು ನಿಮ್ಮ ಸೇವಕನಾದ ಯೋವಾಬನೇ ಹೌದು.</verse>
				<verse number="20">ಅಬ್ಷಾಲೋಮನ ವಿಷಯವನ್ನು ರೂಪಾಂತರ ಪಡಿಸುವುದಕ್ಕಾಗಿ ನಿಮ್ಮ ಸೇವಕನಾದ ಯೋವಾಬನೇ ಇದನ್ನು ಮಾಡಿದನು. ನನ್ನ ಒಡೆಯರು ದೇವದೂತನಂಥ ಜ್ಞಾನಿ; ಅವರು ಭೂಲೋಕದಲ್ಲಿ ನಡೆಯುವುದನ್ನೆಲ್ಲಾ ತಿಳಿದುಕೊಳ್ಳುತ್ತಾರೆ!” ಎಂದು ಉತ್ತರಕೊಟ್ಟಳು.</verse>
				<verse number="21">ಅನಂತರ ಅರಸನು ಯೋವಾಬನಿಗೆ, “ನೀನು ಕೇಳಿಕೊಂಡದ್ದನ್ನು ಅನುಗ್ರಹಿಸಿದ್ದೇನೆ; ಹೋಗಿ ಆ ಯುವಕ ಅಬ್ಷಾಲೋಮನನ್ನು ಕರೆದುಕೊಂಡು ಬಾ,” ಎಂದನು.</verse>
				<verse number="22">ಆಗ ಯೋವಾಬನು ನೆಲಕ್ಕೆ ಬಿದ್ದು ನಮಸ್ಕರಿಸಿ ಅರಸನನ್ನು ಹರಸಿ, “ಅರಸರೇ, ನನ್ನ ಒಡೆಯರೇ, ನೀವು ನಿಮ್ಮ ಸೇವಕನಾದ ನನ್ನ ಬಿನ್ನಹವನ್ನು ಆಲಿಸಿದ್ದರಿಂದ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂದು ಈಗ ಗೊತ್ತಾಯಿಸು,” ಎಂದು ಹೇಳಿದನು.</verse>
				<verse number="23">ಬಳಿಕ ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಜೆರೂಸ‍ಲೇಮಿಗೆ ಕರೆದುಕೊಂಡು ಬಂದನು.</verse>
				<verse number="24">ಆದರೆ ಅರಸನು, “ಅಬ್ಷಾಲೋಮನು ತನ್ನ ಮನೆಗೆ ಹೋಗಲಿ; ಅವನು ನನ್ನ ಮುಖವನ್ನು ನೋಡಬಾರದು,” ಎಂದು ಆಜ್ಞಾಪಿಸಿದನು. ಆದ್ದರಿಂದ ಅವನು ತನ್ನ ಮನೆಗೆ ಹೋದನು. ಅರಸನ ಮುಖವನ್ನು ನೋಡಲಿಲ್ಲ.</verse>
				<verse number="25">ಸೌಂದರ್ಯದಲ್ಲಿ ಅಬ್ಷಾಲೋಮನಂತೆ ಹೆಸರುಗೊಂಡ ಪುರುಷನು ಇಸ್ರಯೇಲರಲ್ಲೇ ಇರಲಿಲ್ಲ. ಅವನಲ್ಲಿ ಅಂಗಾಲಿನಿಂದ ನಡುನೆತ್ತಿಯವರೆಗೆ ಒಂದು ದೋಷವಾದರೂ ಇರಲಿಲ್ಲ.</verse>
				<verse number="26">ಅವನ ತಲೆಗೂದಲು ಬಹುಭಾರವಾಗುತ್ತಿದ್ದುದರಿಂದ ಪ್ರತಿವರ್ಷದ ಅಂತ್ಯದಲ್ಲಿ ಬೋಳಿಸಿಕೊಳ್ಳುತ್ತಿದ್ದನು. ಆಗ ಅವನ ತಲೆಗೂದಲು ಸರಕಾರೀ ತೂಕದ ಪ್ರಕಾರ ಎರಡು ಕಿಲೋಗ್ರಾಂ ತೂಕವಾಗುತ್ತಿತ್ತು.</verse>
				<verse number="27">ಅವನಿಗೆ ಮೂರುಮಂದಿ ಗಂಡುಮಕ್ಕಳೂ ಒಬ್ಬ ಮಗಳೂ ಇದ್ದರು. ಮಗಳ ಹೆಸರು ತಾಮಾರ್; ಈಕೆ ಬಹು ಸುಂದರಿಯಾಗಿದ್ದಳು.</verse>
				<verse number="28">ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ಎರಡು ವರ್ಷ ಜೆರುಸಲೇಮಿನಲ್ಲಿ ವಾಸವಾಗಿದ್ದನು.</verse>
				<verse number="29">ಅನಂತರ ಒಂದು ದಿನ ಅವನು, ಅರಸನ ಬಳಿಗೆ ಕಳುಹಿಸುವುದಕ್ಕಾಗಿ ಯೋವಾಬನನ್ನು ಬರಮಾಡಲೆತ್ನಿಸಿದನು. ಆದರೆ ಯೋವಾಬನು ಬರಲಿಲ್ಲ. ಎರಡನೆಯ ಸಾರಿ ಕರೇಕಳುಹಿಸಿದರೂ ಅವನು ಬರಲಿಲ್ಲ.</verse>
				<verse number="30">ಆದುದರಿಂದ ಅಬ್ಷಾಲೋಮನು ತನ್ನ ಸೇವಕರಿಗೆ, “ನೋಡಿ, ಸಮೀಪದಲ್ಲೇ ಯೋವಾಬನ ಜವೆಗೋದಿಹೊಲವುಂಟಲ್ಲವೇ, ಹೋಗಿ ಅದಕ್ಕೆ ಬೆಂಕಿ ಹಚ್ಚಿರಿ,” ಎಂದು ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.</verse>
				<verse number="31">ಆಗ ಯೋವಾಬನು ಅಬ್ಷಾಲೋಮನ ಮನೆಗೆ ಹೋಗಿ, “ನಿನ್ನ ಸೇವಕರು ನನ್ನ ಹೊಲಕ್ಕೆ ಬೆಂಕಿಹಚ್ಚಿದ್ದೇಕೆ?” ಎಂದು ಅವನನ್ನು ಕೇಳಲು</verse>
				<verse number="32">ಅಬ್ಷಾಲೋಮನು, “ನಾನು ಗೆಷೂರಿನಿಂದ ಇಲ್ಲಿಗೆ ಬಂದದ್ದೇಕೆ? ಅಲ್ಲೇ ಇದ್ದಿದ್ದರೆ ಒಳ್ಳೇದಾಗುತ್ತಿತ್ತಲ್ಲವೇ?’ ಎಂದು ನಿನ್ನ ಮುಖಾಂತರ ಅರಸನಿಗೆ ತಿಳಿಸುವುದಕ್ಕಾಗಿ ನಿನ್ನನ್ನು ಕರೇಕಳುಹಿಸಿದೆ; ನಾನು ಹೇಗೂ ಅರಸನ ಮುಖವನ್ನು ನೋಡಬೇಕು; ನಾನು ಅಪರಾಧಿ ಆಗಿದ್ದರೆ ಅವರು ನನ್ನನ್ನು ಕೊಲ್ಲಿಸಲಿ,” ಎಂದನು.</verse>
				<verse number="33">ಯೋವಾಬನು ಹೋಗಿ ಇದನ್ನು ಅರಸನಿಗೆ ತಿಳಿಸಿದಾಗ ಅರಸನು ಅಬ್ಷಾಲೋಮನನ್ನು ಕರೆಯಿಸಿದನು. ಅವನು ಅರಸನ ಬಳಿಗೆ ಬಂದು ಸಾಷ್ಟಾಂಗ ನಮಸ್ಕಾರ ಮಾಡಿದನು. ಅರಸನು ಅವನಿಗೆ ಮುದ್ದಿಟ್ಟನು.</verse>
			</chapter>
			<chapter number="15">
				<verse number="1">ಸ್ವಲ್ಪಕಾಲವಾದನಂತರ ಅಬ್ಷಾಲೋಮನು ತನ್ನ ಮುಂದೆ ಮೈಗಾವಲಾಗಿ ಓಡುವುದಕ್ಕೆ ಐವತ್ತು ಮಂದಿ ಆಳುಗಳನ್ನು ನೇಮಿಸಿದನು. ಅದಕ್ಕಾಗಿ ಒಂದು ರಥವನ್ನೂ ಕುದುರೆಗಳನ್ನೂ ಪಡೆದುಕೊಂಡನು.</verse>
				<verse number="2">ಅವನು ಮುಂಜಾನೆಯೇ ಎದ್ದು ಊರುಬಾಗಿಲ ಬಳಿಯಲ್ಲಿ ನಿಂತುಕೊಳ್ಳುತ್ತಿದ್ದನು. ಯಾರಾದರೂ ತಮ್ಮ ವ್ಯಾಜ್ಯ ತೀರಿಸಿಕೊಳ್ಳುವುದಕ್ಕಾಗಿ ಅರಸನ ಬಳಿಗೆ ಹೋಗುವುದನ್ನು ಅಬ್ಷಾಲೋ‍ಮನು ಕಂಡರೆ ಅಂಥವನನ್ನು ತನ್ನ ಬಳಿಗೆ ಕರೆದು, “ನೀನು ಯಾವ ಊರಿನವನು?” ಎಂದು ವಿಚಾರಿಸುತ್ತಿದ್ದನು. ಅವರು, “ನಿನ್ನ ಸೇವಕರಾದ ನಾವು ಇಸ್ರಯೇಲರ ಇಂಥ ಕುಲಕ್ಕೆ ಸೇರಿದವರು,” ಎಂದು ಉತ್ತರಕೊಡುತ್ತಿದ್ದರು.</verse>
				<verse number="3">ಆಗ ಅಬ್ಷಾಲೋಮನು‍, “ನೋಡಿ, ನಿಮ್ಮ ವ್ಯಾಜ್ಯ ಒಳ್ಳೆಯದು ಹಾಗು ನ್ಯಾಯವಾದದ್ದು. ಆದರೆ ವ್ಯಾಜ್ಯಗಳನ್ನು ವಿಚಾರಿಸುವುದಕ್ಕೆ ರಾಜಪ್ರತಿನಿಧಿ ಒಬ್ಬನೂ ನೇಮಕವಾಗಿಲ್ಲ.</verse>
				<verse number="4">ವ್ಯಾಜ್ಯವಾಗಲಿ ಬಿನ್ನಹವಾಗಲಿ ಉಳ್ಳವರು ಬಂದು ನ್ಯಾಯವನ್ನು ಪಡೆದುಕೊಳ್ಳುವ ಹಾಗೆ ನನ್ನನ್ನೇ ನಾಡಿನ ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದು ಸೂಚಿಸುತ್ತಿದ್ದನು.</verse>
				<verse number="5">ಯಾವನಾದರು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡುವುದಕ್ಕೆ ಬಂದರೆ ಅಂಥವನನ್ನು ಕೂಡಲೆ ಕೈಚಾಚಿ ಅವನನ್ನು ಎತ್ತಿ ಮುದ್ದಿಡುತ್ತಿದ್ದನು.</verse>
				<verse number="6">ಅರಸನ ಬಳಿಗೆ ನ್ಯಾಯನಿರ್ಣಯಕ್ಕಾಗಿ ಬರುತ್ತಿದ್ದ ಎಲ್ಲಾ ಇಸ್ರಯೇಲರಿಗೆ ಅಬ್ಷಾಲೋಮನು ಹೀಗೆಯೇ ಮಾಡಿ ಎಲ್ಲರ ಮನಸ್ಸುಗಳನ್ನು ತನ್ನ ಕಡೆಗೆ ಒಲಿಸಿಕೊಳ್ಳುತ್ತಿದ್ದನು.</verse>
				<verse number="7">ನಾಲ್ಕು ವರ್ಷಗಳಾದನಂತರ ಅಬ್ಷಾಲೋಮನು ಅರಸನಿಗೆ, “ನಾನು ಸರ್ವೇಶ್ವರನಿಗೆ ಹೊತ್ತ ಹರಕೆಗಳನ್ನು ಸಲ್ಲಿಸುವುದಕ್ಕಾಗಿ ಹೆಬ್ರೋನಿಗೆ ಹೋಗಬೇಕಾಗಿದೆ, ಅಪ್ಪಣೆಯಾಗಲಿ.</verse>
				<verse number="8">ನಿಮ್ಮ ಸೇವಕನಾದ ನಾನು ಸಿರಿಯಾದೇಶದ ಗೆಷೂರಿನಲ್ಲಿದ್ದಾಗ ಸರ್ವೇಶ್ವರ ನನ್ನನ್ನು ಮರಳಿ ಜೆರುಸಲೇಮಿಗೆ ಬರಮಾಡುವುದಾದರೆ ಅವರಿಗೆ ಒಂದು ವಿಶೇಷ ಆರಾಧನೆ ಮಾಡಿಸುವೆನೆಂದು ಹರಕೆ ಮಾಡಿದ್ದೆನು,” ಎಂದು ವಿಜ್ಞಾಪಿಸಿದನು.</verse>
				<verse number="9">ಅರಸನು, “ಹೋಗು, ನಿನಗೆ ಶುಭವಾಗಲಿ!” ಎಂದನು. ಅಬ್ಷಾಲೋಮನು ಹೆಬ್ರೋನಿಗೆ ಹೊರಟುಹೋದನು.</verse>
				<verse number="10">ಅವನು ಗೂಢಚಾರನನ್ನು ಕಳುಹಿಸಿ ಇಸ್ರಯೇಲರ ಎಲ್ಲಾ ಕುಲದವರಿಗೆ, “ನೀವು ತುತೂರಿಯ ಧ್ವನಿಯನ್ನು ಕೇಳುತ್ತಲೇ ‘ಅಬ್ಷಾ‍ಲೋಮನು ಹೆಬ್ರೋನಿನಲ್ಲಿ ಅರಸ’ ಎಂದು ಘೋಷಿಸಿರಿ,” ಎಂದು ಹೇಳಿಸಿದ್ದನು.</verse>
				<verse number="11">ಅಬ್ಷಾಲೋಮನು ಜೆರುಸಲೇಮಿನಿಂದ ಸಮಾರಾಧನೆಗೆಂದು ಇನ್ನೂರು ಜನರನ್ನು ಕರೆದುಕೊಂಡು ಹೋಗಿದ್ದನು. ಅವರು ಯಥಾರ್ಥಮನಸ್ಸಿನಿಂದ ಹೋದವರು; ಒಳಸಂಚಿನ ಸುಳಿವೇನೂ ಅವರಿಗೆ ಗೊತ್ತಿರಲಿಲ್ಲ.</verse>
				<verse number="12">ಇದಲ್ಲದೆ ಅವನು ಶಾಂತಿಸಮಾಧಾನದ ಬಲಿದಾನ ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬವನನ್ನು ಅವನ ಊರಾದ ಗೀಲೋವಿನಿಂದ ಬರಮಾಡಿಸಿದ್ದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದುದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.</verse>
				<verse number="13">ಇಸ್ರಯೇಲರ ಮನಸ್ಸು ಅಬ್ಷಾಲೋಮನ ಕಡೆಗೆ ತಿರುಗಿಕೊಂಡಿತೆಂಬ ವರ್ತಮಾನ ದಾವೀದನಿಗೆ ಮುಟ್ಟಿತು.</verse>
				<verse number="14">ಆಗ ಅವನು ಜೆರುಸಲೇಮಿನಲ್ಲಿದ್ದ ತನ್ನ ಸೇವಕರಿಗೆ, “ಏಳಿ, ಓಡಿಹೋಗೋಣ; ಇಲ್ಲೇ ಇದ್ದರೆ ನಾವು ಅಬ್ಷಾಲೋಮನ ಕೈಯಿಂದ ತಪ್ಪಿಸಿಕೊಳ್ಳಲಾರೆವು. ಬೇಗ ಹೊರಡೋಣ; ಅವನು ಅಕಸ್ಮಾತ್ತಾಗಿ ನಮ್ಮ ಮೇಲೆ ಬಿದ್ದು ನಮಗೆ ದುರ್ಗತಿಯನ್ನುಂಟುಮಾಡಿ ಪಟ್ಟಣದವರನ್ನೆಲ್ಲಾ ಕತ್ತಿಯಿಂದ ಸಂಹರಿಸಾನು,” ಎಂದು ಹೇಳಿದನು.</verse>
				<verse number="15">ಸೇವಕರು ಅರಸನಿಗೆ, “ನಮ್ಮ ಒಡೆಯರಾದ ಅರಸರಿಗೆ ಸರಿತೋಚಿದ್ದನ್ನೇ ಮಾಡಲು ಸಿದ್ಧರಾಗಿದ್ದೇವೆ,” ಎಂದು ಉತ್ತರಕೊಟ್ಟರು.</verse>
				<verse number="16">ಆಗ ಅರಸನು ಮನೆಕಾಯುವುದಕ್ಕಾಗಿ ಹತ್ತುಮಂದಿ ಉಪಪತ್ನಿಯರನ್ನು ಬಿಟ್ಟು ಉಳಿದವರನ್ನೆಲ್ಲಾ ಕರೆದುಕೊಂಡು ಹೊರಟನು.</verse>
				<verse number="17">ಅರಸನೂ ಅವನ ಜೊತೆಯಲ್ಲಿ ಹೋದ ಜನರೆಲ್ಲರೂ ಪಟ್ಟಣದ ಕಡೇ ಮನೆಯ ಬಳಿಯಲ್ಲಿ ತುಸು ಹೊತ್ತು ನಿಂತರು.</verse>
				<verse number="18">ದಾವೀದನ ಎಲ್ಲಾ ಸೇವಕರೂ, ‘ಕೆರೇತ್ಯ’ ಹಾಗು ‘ಪೆಲೇತ್ಯ’ ಎಂಬ ಕಾವಲುದಂಡುಗಳು ಮತ್ತು ಗತ್ ಊರಿನಿಂದ ಅರಸನ ಜೊತೆಯಲ್ಲಿ ಬಂದಿದ್ದ ಆರುನೂರು ಮಂದಿ ಗಿತ್ತೀಯರು ಅರಸನ ಮುಂದೆ ಹೋದರು.</verse>
				<verse number="19">ಆಗ ಅರಸನು ಗಿತ್ತೀಯನಾದ ಇತ್ತೈ ಎಂಬವನಿಗೆ, “ನೀನು ನಮ್ಮ ಸಂಗಡ ಏಕೆ ಬರಬೇಕು? ನೀನು ಸ್ವದೇಶವನ್ನು ಬಿಟ್ಟು ನನ್ನ ಆಶ್ರಯಕ್ಕೆ ಬಂದವನಲ್ಲವೇ? ಹಿಂದಿರುಗಿ ಹೋಗಿ ಅರಸನ ಬಳಿಯಲ್ಲೇ ವಾಸಮಾಡು.</verse>
				<verse number="20">ನಾನು ಎಲ್ಲೆಲ್ಲಿಯೋ ಅಲೆಯುತ್ತಿರಬೇಕಾಗುವುದು; ಹೀಗಿರುವುದರಿಂದ ನಿನ್ನೆ ಬಂದಂಥ ನಿನ್ನನ್ನು ಕರೆದುಕೊಂಡುಹೋಗಿ ಸುಮ್ಮನೆ ಏಕೆ ತಿರುಗಾಡಲಿಕ್ಕೆ ಹಚ್ಚಬೇಕು? ನಿನ್ನ ಸಹೋದರನನ್ನು ಕರೆದುಕೊಂಡು ಹಿಂದಿರುಗಿ ಹೋಗು; ದೇವರ ಅನಂತ ಕೃಪೆ ನಿನ್ನ ಮೇಲಿರಲಿ,” ಎಂದು ಹೇಳಿದನು.</verse>
				<verse number="21">ಅದಕ್ಕೆ ಇತ್ತೈ, “ಸರ್ವೇಶ್ವರನಾಣೆ, ನನ್ನ ಒಡೆಯರಾದ ಅರಸರ ಜೀವದಾಣೆ, ಪ್ರಾಣಹೋದರೂ ಉಳಿದರೂ ನನ್ನ ಒಡೆಯರಾದ ಅರಸರಿರುವಲ್ಲಿಗೇ ಹೋಗುವೆನು,” ಎಂದು ಉತ್ತರಕೊಟ್ಟನು.</verse>
				<verse number="22">ಆಗ ದಾವೀದನು, “ಒಳ್ಳೆಯದು, ಮುಂದೆ ನಡೆ,” ಎಂದನು. ಗಿತ್ತೀಯನಾದ ಇತ್ತೈಯು ತನ್ನ ಎಲ್ಲಾ ಸೈನಿಕರನ್ನೂ ಪರಿಜನರನ್ನೂ, ಕರೆದುಕೊಂಡು ಮುಂದೆ ನಡೆದನು.</verse>
				<verse number="23">ಇವರೆಲ್ಲರೂ ಬಹಳವಾಗಿ ನಡೆಯುವಾಗ ಸುತ್ತ-ಮುತ್ತಿನವರೆಲ್ಲರೂ ಬಹಳವಾಗಿ ಅತ್ತರು. ಅರಸನೂ ಎಲ್ಲ ಜನರೂ ಕಿದ್ರೋನ್ ಹಳ್ಳವನ್ನು ದಾಟಿ ಅರಣ್ಯಮಾರ್ಗ ಹಿಡಿದರು.</verse>
				<verse number="24">ಚಾದೋಕನೂ ಅವನ ವಶದಲ್ಲಿದ್ದ ಲೇವಿಯರೆಲ್ಲರೂ ದೇವರ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು, ಅದನ್ನು ಜನರೆಲ್ಲರು ದಾಟಿ ಹೋಗುವವರೆಗೆ ಕೆಳಗಿಳಿಸಿದ್ದರು. ಎಬ್ಯಾತಾರನೂ ಬಂದಿದ್ದನು.</verse>
				<verse number="25">ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಕ್ಕೆ ತೆಗೆದುಕೊಂಡುಹೋಗು; ಸರ್ವೇಶ್ವರನ ದೃಷ್ಟಿಯಲ್ಲಿ ನನಗೆ ದಯೆದೊರಕಿದರೆ ನಾನು ಅವರನ್ನೂ ಅವರ ಆಲಯವನ್ನೂ ನೋಡುವ ಹಾಗೆ ತಾವೇ ನನ್ನನ್ನು ಹಿಂದಕ್ಕೆ ಬರಮಾಡುವರು.</verse>
				<verse number="26">‘ನಿನ್ನಲ್ಲಿ ನನಗೆ ಇಷ್ಟವಿಲ್ಲ,’ ಎಂದು ತೋರಿದರೆ ತಮಗೆ ಸರಿಕಂಡಂತೆ ಮಾಡಲಿ. ಅವರ ಚಿತ್ತದಂತೆ ಆಗಲಿ,” ಎಂದನು.</verse>
				<verse number="27">ಇದಲ್ಲದೆ ಅರಸನು ಯಾಜಕನಾದ ಚಾದೋಕನಿಗೆ, “ನೀನು ದೇವದರ್ಶಿ; ನೀನು ನಿನ್ನ ಮಗನಾದ ಅಹೀಮಾಚನು ಮತ್ತು ಎಬ್ಯಾತಾರನ ಮಗನಾದ ಯೋನಾತಾನನು ಎಂಬ ಈ ಇಬ್ಬರು ಹುಡುಗರನ್ನು ಕರೆದುಕೊಂಡು ಸುರಕ್ಷಿತವಾಗಿ ಪಟ್ಟಣಕ್ಕೆ ಹೋಗಬೇಕು.</verse>
				<verse number="28">ನಿಮ್ಮಿಂದ ವರ್ತಮಾನ ಬರುವ ತನಕ ನಾನು ಅಡವಿಯಲ್ಲಿ ನದಿದಾಟುವ ಸ್ಥಳದ ಹತ್ತಿರ ಇರುವೆನು,” ಎಂದು ಹೇಳಿದನು.</verse>
				<verse number="29">ಆಗ ಚಾದೋಕನು ಹಾಗು ಎಬ್ಯಾತಾರನು ದೇವರ ಮಂಜೂಷವನ್ನು ಜೆರುಸಲೇಮಿಗೆ ಕೊಂಡೊಯ್ದು ಅಲ್ಲೇ ವಾಸಿಸಿದರು.</verse>
				<verse number="30">ದಾವೀದನು, ಮುಖವನ್ನು ಮರೆಮಾಚಿಕೊಂಡು ಅಳುತ್ತಾ, ಬರಿಗಾಲಿನಿಂದ ಎಣ್ಣೇಮರಗಳ ಗುಡ್ಡವನ್ನೇರಿದನು. ಅವನ ಜೊತೆಯಲ್ಲಿದ್ದ ಜನರೂ ಮೋರೆಮುಚ್ಚಿಕೊಂಡು ಅಳುತ್ತಾ ಏರಿದರು.</verse>
				<verse number="31">ಅಬ್ಷಾಲೋಮನ ಸಂಗಡ ಒಳಸಂಚು ಮಾಡಿದವರಲ್ಲಿ ಅಹೀತೋಫೆಲನೂ ಇದ್ದಾನೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು, “ಸರ್ವೇಶ್ವರಾ, ಅಹೀತೋಫೆಲನ ಆಲೋಚನೆಗಳನ್ನು ನಿರರ್ಥಕಪಡಿಸು,” ಎಂದು ಪ್ರಾರ್ಥಿಸಿದನು.</verse>
				<verse number="32">ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ, ಅರ್ಕೀಯನಾದ ಹೂಷೈ ಎಂಬವನು ಅಂಗಿಯನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು ಅರಸನ ಬಳಿಗೆ ಬಂದನು.</verse>
				<verse number="33">ಅರಸನು ಅವನಿಗೆ, “ನೀನು ನನ್ನ ಸಂಗಡ ಬರುವುದಾದರೆ ನನಗೆ ಭಾರ ಆಗುವಿಯಷ್ಟೆ.</verse>
				<verse number="34">ಆದರೆ ನೀನು ಹಿಂದಿರುಗಿ ಪಟ್ಟಣಕ್ಕೆ ಹೋಗಿ ಅಬ್ಷಾಲೋಮನಿಗೆ, ‘ಅರಸರೇ, ನಾನು ನಿಮ್ಮ ಸೇವಕನು; ಹಿಂದೆ ನಿಮ್ಮ ತಂದೆಗೆ ಸೇವೆಸಲ್ಲಿಸಿದಂತೆ ಈಗ ನಿಮ್ಮ ಸೇವೆಮಾಡುತ್ತೇನೆ,’ ಎಂದು ಹೇಳುವುದಾದರೆ ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡುವುದಕ್ಕೆ ನೀನು ನನಗೆ ಅನುಕೂಲ ಮಾಡಿಕೊಟ್ಟಂತಾಗುವುದು.</verse>
				<verse number="35">ಅಲ್ಲಿ ನಿನ್ನ ಸಂಗಡ ಯಾಜಕರಾದ ಚಾದೋಕ್ ಹಾಗು ಎಬ್ಯಾತಾರರು ಇರುತ್ತಾರೆ ಅಲ್ಲವೆ; ಅರಮನೆಯಲ್ಲಿ ನಿನಗೆ ಗೊತ್ತಾಗುವ ವರ್ತಮಾನವನ್ನೆಲ್ಲಾ ಆ ಇಬ್ಬರು ಯಾಜಕರಿಗೆ ತಿಳಿಸು. ಅವರ ಬಳಿಯಲ್ಲಿ ಇಬ್ಬರು ಹುಡುಗರಿದ್ದಾರೆ;</verse>
				<verse number="36">ಒಬ್ಬನು ಚಾದೋಕನ ಮಗನಾದ ಅಹೀಮಾಚನು, ಇನ್ನೊಬ್ಬನು ಎಬ್ಯಾತಾರನ ಮಗನಾದ ಯೋನಾತಾನನು. ಇವರ ಮುಖಾಂತರ ನೀನು ಎಲ್ಲಾ ವರ್ತಮಾನವನ್ನು ನನಗೆ ಮುಟ್ಟಿಸಬಹುದು,” ಎಂದು ಹೇಳಿ ಅವನನ್ನು ಕಳುಹಿಸಿದನು.</verse>
				<verse number="37">ಅಬ್ಷಾಲೋಮನು ಜೆರುಸಲೇಮನ್ನು ಪ್ರವೇಶಿಸುವಷ್ಟರಲ್ಲೇ ದಾವೀದನ ಸ್ನೇಹಿತನಾದ ಹೂಷೈಯು ಪಟ್ಟಣಕ್ಕೆ ಬಂದನು.</verse>
			</chapter>
			<chapter number="16">
				<verse number="1">ದಾವೀದನು ಗುಡ್ಡದ ತುದಿಯ ಆಚೆಗೆ ಹೋಗುವಷ್ಟರಲ್ಲಿ ಮೆಫೀಬೋಶೆತನ ಸೇವಕನಾದ ಚೀಬನು ಇನ್ನೂರು ರೊಟ್ಟಿಗಳನ್ನು, ನೂರು ಒಣಗಿದ ದ್ರಾಕ್ಷಿಗೊಂಚಲುಗಳನ್ನು, ನೂರು ಹಣ್ಣುಗಳನ್ನು ಹಾಗು ಒಂದು ಬುದ್ದಲಿ ದ್ರಾಕ್ಷಾರಸವನ್ನು ತಡಿಹಾಕಿದ ಎರಡು ಕತ್ತೆಗಳ ಮೇಲೆ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು.</verse>
				<verse number="2">ಅರಸನು ಚೀಬನನ್ನು ನೋಡಿ, “ಇವುಗಳನ್ನು ಏಕೆ ತಂದೆ?” ಎಂದು ಕೇಳಿದನು. ಅವನು, “ಕತ್ತೆಗಳನ್ನು ಅರಸರ ಮನೆಯವರು ಸವಾರಿಮಾಡಲೆಂದು, ಹಣ್ಣು ರೊಟ್ಟಿಗಳನ್ನು ಆಳುಗಳು ತಿನ್ನಲೆಂದೂ ಹಾಗು ದ್ರಾಕ್ಷಾರಸವನ್ನು ಅರಣ್ಯದಲ್ಲಿ ದಣಿದವರು ಕುಡಿಯಲೆಂದು ತಂದಿದ್ದೇನೆ,” ಎಂದು ಉತ್ತರಕೊಟ್ಟನು.</verse>
				<verse number="3">ಅರಸನು ಮತ್ತೆ, “ನಿನ್ನ ಯಜಮಾನನ ಮಗ ಎಲ್ಲಿದ್ದಾನೆ?” ಎಂದು ಕೇಳಲು ಅವನು, “ತನ್ನ ತಂದೆಯ ರಾಜ್ಯವನ್ನು ಇಸ್ರಯೇಲರು ಈ ದಿನ ತನಗೆ ಮರಳಿಕೊಡುವರೆಂದು ಹೇಳಿ ಅವನು ಜೆರುಸಲೇಮಿನಲ್ಲೇ ಉಳಿದುಕೊಂಡನು,” ಎಂದನು.</verse>
				<verse number="4">ಆಗ ಅರಸನು, “ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ,” ಎಂದು ಹೇಳಿದನು. ಅವನು, “ಅರಸರೇ, ನಿಮಗೆ ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ; ನನ್ನ ಒಡೆಯರೇ, ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ!” ಎಂದನು.</verse>
				<verse number="5">ಅರಸನಾದ ದಾವೀದನು ಬಹುರೀಮಿಗೆ ಬಂದಾಗ ಸೌಲನ ವಂಶದವನೂ ಗೇರನ ಮಗನೂ ಆದ ಶಿಮ್ಮೀ ಎಂಬವನು ದಾವೀದನನ್ನು ಶಪಿಸುತ್ತಾ ಆ ಊರಿನಿಂದ ಹೊರಗೆ ಬಂದನು.</verse>
				<verse number="6">ಅವನು ದಾವೀದನ, ಅವನ ಎಲ್ಲ ಸೇವಕರ, ಎಡಬಲದಲ್ಲಿದ್ದ ಸೈನಿಕರ ಹಾಗು ಶೂರರ ಕಡೆಗೆ ಕಲ್ಲೆಸೆಯ ತೊಡಗಿದನು.</verse>
				<verse number="7">ಅಲ್ಲದೆ, ಅವನು ದಾವೀದನನ್ನು ಶಪಿಸುತ್ತಾ, “ನಡೆ, ಕೊಲೆಗಾರನೇ, ನೀಚನೇ, ನಡೆ; ಸೌಲನ ರಾಜ್ಯವನ್ನು ಕಬಳಿಸಿಕೊಂಡು, ಅವನ ಮನೆಯವರನ್ನು ಕೊಂದದ್ದಕ್ಕಾಗಿ ಸರ್ವೇಶ್ವರ ನಿನಗೆ ಮುಯ್ಯಿ ತೀರಿಸಿದ್ದಾರೆ.</verse>
				<verse number="8">ಅವರು ರಾಜ್ಯವನ್ನು ನಿನ್ನ ಮಗ ಅಬ್ಷಾಲೋಮನಿಗೆ ಕೊಟ್ಟುಬಿಟ್ಟರು. ಕೊಲೆಗಾರನೇ, ಇಗೋ, ನಿನಗೆ ಈಗ ತಕ್ಕ ಆಪತ್ತು ಬಂದಿದೆ,” ಎಂದನು.</verse>
				<verse number="9">ಆಗ ಚೆರೂಯಳ ಮಗ ಅಬೀಷೈಯು ಅರಸನಿಗೆ, “ಈ ಸತ್ತನಾಯಿ ಅರಸನಾದ ನನ್ನ ಒಡೆಯರನ್ನು ಶಪಿಸುವುದೇನು? ಅಪ್ಪಣೆಯಾಗಲಿ, ನಾನು ಅವನಿರುವಲ್ಲಿಗೇ ಹೋಗಿ, ಅವನ ತಲೆ ಹಾರಿಸಿಕೊಂಡು ಬರುತ್ತೇನೆ,” ಎಂದನು.</verse>
				<verse number="10">ಅದಕ್ಕೆ ಅರಸನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ಬಿಡಿ, ಅವನು ಶಪಿಸಲಿ; ದಾವೀದನನ್ನು ಶಪಿಸೆಂದು ಸರ್ವೇಶ್ವರಸ್ವಾಮಿಯೇ ಅವನಿಗೆ ಆಜ್ಞಾಪಿಸಿದ ಮೇಲೆ ‘ನೀನು ಹೀಗೇಕೆ ಮಾಡಿದೆ’ ಎಂದು ಅವನನ್ನು ಯಾರು ಕೇಳಲಾದೀತು?” ಎಂದು ಉತ್ತರಕೊಟ್ಟನು.</verse>
				<verse number="11">ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನ್ಯನು ಹೀಗೆ ಮಾಡುವುದು ಯಾವ ಲೆಕ್ಕ? ಬಿಡಿ, ಅವನು ಶಪಿಸಲಿ; ಹೀಗೆ ಮಾಡಬೇಕೆಂದು ಸರ್ವೇಶ್ವರನೇ ಅವನಿಗೆ ಆಜ್ಞಾಪಿಸಿದ್ದಾರೆ.</verse>
				<verse number="12">ಬಹುಶಃ ಸರ್ವೇಶ್ವರ ನನ್ನ ಕಷ್ಟವನ್ನು ನೋಡಿ ಈ ದಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಿಯಾರು,” ಎಂದು ಹೇಳಿದನು.</verse>
				<verse number="13">ದಾವೀದನೂ ಅವನ ಜನರೂ ದಾರಿಹಿಡಿದು ಹೋಗುವಾಗ ಶಿಮ್ಮಿಯು ಶಪಿಸುತ್ತಾ ಕಲ್ಲುಮಣ್ಣು ತೂರುತ್ತಾ, ಗುಡ್ಡದ ಓರೆಯಲ್ಲಿ ಸಮಾನಾಂತರದಲ್ಲೇ ನಡೆಯುತ್ತಿದ್ದನು.</verse>
				<verse number="14">ಅರಸನೂ ಅವನ ಜೊತೆಯಲ್ಲಿ ಬಂದವರೆಲ್ಲರೂ ದಣಿದವರಾಗಿ ಜೋರ್ಡನ್ ಸ್ಥಳವನ್ನು ಸೇರಿ ಅಲ್ಲಿ ವಿಶ್ರಮಿಸಿಕೊಂಡರು.</verse>
				<verse number="15">ಅಷ್ಟರಲ್ಲಿ ಅಬ್ಷಾಲೋಮನು ಎಲ್ಲ ಇಸ್ರಯೇಲರೊಡನೆ ಜೆರುಸಲೇಮಿಗೆ ಬಂದನು. ಅಹೀತೋಫೆಲನೂ ಅವನ ಸಂಗಡ ಇದ್ದನು.</verse>
				<verse number="16">ಅರ್ಕೀಯನೂ ದಾವೀದನ ಸ್ನೇಹಿತನೂ ಆಗಿದ್ದ ಹೂಷೈಯು ಅಬ್ಷಾಲೋಮನ ಬಳಿಗೆ ಬಂದು, “ಅರಸರು ಚಿರಂಜೀವಿಯಾಗಿ ಬಾಳಲಿ! ಅರಸರು ಚಿರಂಜೀವಿಯಾಗಿ ಬಾಳಲಿ!” ಎಂದು ಘೋಷಿಸಿದನು.</verse>
				<verse number="17">ಅಬ್ಷಾಲೋಮನು, “ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇತಾನೇ? ನೀನು ನಿನ್ನ ಸ್ನೇಹಿತನೊಡನೆ ಏಕೆ ಹೋಗಲಿಲ್ಲ?” ಎಂದನು.</verse>
				<verse number="18">ಅದಕ್ಕೆ ಹೂಷೈಯು, “ಹಾಗಲ್ಲ, ಸರ್ವೇಶ್ವರ, ಈ ಜನ ಹಾಗು ಇಸ್ರಯೇಲರೆಲ್ಲರು ಯಾರನ್ನು ಆರಿಸಿದ್ದಾರೋ ಅವನ ಪಕ್ಷದವನಾಗಿರುತ್ತೇನೆ ನಾನು; ಅವನ ಬಳಿಯಲ್ಲೇ ವಾಸಿಸುತ್ತೇನೆ.</verse>
				<verse number="19">ಇದಲ್ಲದೆ, ನಾನು ಈಗ ಸೇವೆಮಾಡಬೇಕೆಂದಿರುವುದು ರಾಜಪುತ್ರನ ಸನ್ನಿಧಿಯಲ್ಲಿ ಅಲ್ಲವೇ? ನಿಮ್ಮ ತಂದೆಯ ಸನ್ನಿಧಿಯಲ್ಲಿ ಸೇವೆಮಾಡಿದಂತೆ ನಿಮ್ಮ ಸನ್ನಿಧಿಯಲ್ಲಿ ಸೇವೆಮಾಡುವೆನು,” ಎಂದು ಉತ್ತರಕೊಟ್ಟನು.</verse>
				<verse number="20">ಅನಂತರ ಅಬ್ಷಾಲೋಮನು, “ನಾವು ಈಗ ಮಾಡತಕ್ಕದ್ದೇನು? ಆಲೋಚನೆಮಾಡಿ ಹೇಳು,” ಎಂಬುದಾಗಿ ಅಹೀತೋಫೆಲನನ್ನು ಕೇಳಿದನು.</verse>
				<verse number="21">ಅವನು, “ತಾವು ಹೋಗಿ ತಮ್ಮ ತಂದೆ ಮನೆಕಾಯುವುದಕ್ಕೆ ಬಿಟ್ಟಿರುವ ಅವನ ಉಪಪತ್ನಿಗಳೊಡನೆ ಸಂಗಮಿಸಿ. ಹೀಗೆ ಮಾಡುವುದಾದರೆ, ತಾವು ತಮ್ಮ ತಂದೆಗೆ ಅಸಹ್ಯವೈರಿಯಾದಿರೆಂದು ಎಲ್ಲ ಇಸ್ರಯೇಲರಿಗೆ ತಿಳಿಯುವುದು. ಆಗ ತಮ್ಮ ಪಕ್ಷದವರು ಹುಮ್ಮಸ್ಸುಗೊಳ್ಳುವರು,” ಎಂದು ಉತ್ತರಕೊಟ್ಟನು.</verse>
				<verse number="22">ಆಗ ಅಬ್ಷಾಲೋಮನಿಗಾಗಿ ಮಾಳಿಗೆಯ ಮೇಲೆ ಗುಡಾರಹಾಕಿದರು. ಅವನು ಎಲ್ಲ ಇಸ್ರಯೇಲರ ಮುಂದೆಯೇ ತನ್ನ ತಂದೆಯ ಉಪಪತ್ನಿಗಳನ್ನು ಕೂಡಿದನು.</verse>
				<verse number="23">ಆ ದಿನಗಳಲ್ಲಿ ಅಹೀತೋಫೆಲನ ಆಲೋಚನೆಗಳಿಗೆ ದೈವೋತ್ತರಗಳಿಗಿರುವಷ್ಟೇ ಬೆಲೆಯಿತ್ತು. ದಾವೀದನೂ ಅಬ್ಷಾಲೋಮನೂ ಅವನ ಸಲಹೆಗಳನ್ನು ಮಾನ್ಯಮಾಡುತ್ತಿದ್ದರು.</verse>
			</chapter>
			<chapter number="17">
				<verse number="1">ತರುವಾಯ ಅಹೀತೋಫೆಲನು ಅಬ್ಷಾಲೋಮನಿಗೆ, “ಅಪ್ಪಣೆಯಾಗಲಿ, ನಾನು ಹನ್ನೆರಡು ಸಾವಿರ ಜನರನ್ನು ಆರಿಸಿಕೊಂಡು ಈ ರಾತ್ರಿಯೇ ದಾವೀದನನ್ನು ಹಿಂದಟ್ಟುವೆನು;</verse>
				<verse number="2">ಅವನು ದಣಿದವನೂ ಧೈರ್ಯಗುಂದಿದವನೂ ಆಗಿರುವಾಗಲೇ ಫಕ್ಕನೆ ಅವನ ಮೇಲೆ ಬಿದ್ದು ಅವನನ್ನು ಬೆದರಿಸುವೆನು; ಅವನ ಜನರೆಲ್ಲರೂ ಓಡಿಹೋಗುವರು.</verse>
				<verse number="3">ಅರಸನೊಬ್ಬನನ್ನೇ ಕೊಂದು ಎಲ್ಲಾ ಜನರನ್ನು ತಿರುಗಿ ನಿಮ್ಮ ಬಳಿಗೆ ಬರಮಾಡುವೆನು. ನಿಮ್ಮ ಅಪೇಕ್ಷೆಯಂತೆ ಎಲ್ಲಾ ಜನರೂ ಹಿಂದಿರುಗಿ ಬಂದ ಮೇಲೆ ನಾಡಿನಲ್ಲಿ ಎಲ್ಲಾ ಸಮಾಧಾನವುಂಟಾಗುವುದು,” ಎಂದು ಹೇಳಿದನು.</verse>
				<verse number="4">ಈ ಸಲಹೆ ಅಬ್ಷಾಲೋಮನಿಗೂ ಇಸ್ರಯೇಲರ ಹಿರಿಯರೆಲ್ಲರಿಗೂ ಸರಿಯಾಗಿ ಕಂಡಿತು.</verse>
				<verse number="5">ಆಮೇಲೆ ಅಬ್ಷಾಲೋಮನು, “‍ಅರ್ಕೀಯನಾದ ಹೂಷೈಯನ್ನು ಕರೆದು ಅವನ ಅಭಿಪ್ರಾಯವನ್ನೂ ಕೇಳೋಣ,” ಎಂದುಕೊಂಡನು.</verse>
				<verse number="6">ಅವನು ತನ್ನ ಬಳಿಗೆ ಬಂದಾಗ, “ಅಹೀತೋಫೆಲನು ಹೀಗೆ ಹೀಗೆ ಹೇಳಿದ್ದಾನೆ; ಇದರಂತೆ ಮಾಡಿದರೆ ಒಳ್ಳೇದಾಗುವುದೇ? ಇಲ್ಲವಾದರೆ ನಿನ್ನ ಅಭಿಪ್ರಾಯ ಏನು?” ಎಂದು ಕೇಳಿದನು.</verse>
				<verse number="7">ಆಗ ಹೂಷೈಯು ಅಬ್ಷಾಲೋಮನಿಗೆ, “ಈ ಸಾರಿ ಅಹೀತೋಫೆಲನು ಹೇಳಿದ ಆಲೋಚನೆ ಒಳ್ಳೆಯದಲ್ಲ;</verse>
				<verse number="8">ತಮ್ಮ ತಂದೆ ಮತ್ತು ಅವನ ಜನರೂ ಶೂರರಾಗಿದ್ದಾರೆಂದೂ, ಈಗಲಾದರೋ ಅವರು ಮರಿಯನ್ನು ಕಳೆದುಕೊಂಡ ಕರಡಿಯಂತೆ ರೋಷ ಉಳ್ಳವರಾಗಿದ್ದಾರೆಂದೂ ತಮಗೆ ಗೊತ್ತುಂಟಲ್ಲವೆ? ಇದಲ್ಲದೆ ತಮ್ಮ ತಂದೆ ಯುದ್ಧ ನಿಪುಣನು; ಜನರ ಮಧ್ಯದಲ್ಲಿ ರಾತ್ರಿ ಕಳೆಯುವುದಿಲ್ಲ.</verse>
				<verse number="9">ಅವನು ಈಗ ಒಂದು ಗುಹೆಯಲ್ಲೋ ಬೇರೆ ಯಾವುದಾದರೊಂದು ಸ್ಥಳದಲ್ಲಾಗಲೋ ಅಡಗಿಕೊಂಡಿರುವನು. ಮೊದಲು ನಮ್ಮವರಲ್ಲೇ ಕೆಲವರು ಮಡಿದರೆ, ಜನರು ಇದನ್ನು ಕೇಳಿ, ಅಬ್ಷಾಲೋಮನ ಪಕ್ಷದವರಿಗೆ ಮಹಾ ಅಪಜಯವಾಯಿತೆಂದು ಸುದ್ದಿಹಬ್ಬಿಸುವರು.</verse>
				<verse number="10">ಆಗ ಸಿಂಹಹೃದಯಿಗಳಾದ ಶೂರರ ಎದೆಯೂ ಕರಗಿ ನೀರಾಗುವುದು. ನಿಮ್ಮ ತಂದೆ ರಣವೀರನೆಂದೂ ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಯೇಲರು ಬಲ್ಲರಷ್ಟೆ.</verse>
				<verse number="11">ಹೀಗಿರುವುದರಿಂದ, ನನ್ನ ಆಲೋಚನೆಯನ್ನು ಕೇಳಿ: “ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿರುವ ಇಸ್ರಯೇಲರಿಂದ ಸಮುದ್ರದ ಮರಳಿನಷ್ಟು ಅಸಂಖ್ಯವಾದ ಸೈನ್ಯವನ್ನು ಕೂಡಿಸಿ ನೀವೂ ಅವರ ಜೊತೆಯಲ್ಲಿ ಯುದ್ಧಕ್ಕೆ ಹೋಗಬೇಕು.</verse>
				<verse number="12">ನಾವು ಅವನಿರುವ ಸ್ಥಳವನ್ನು ಗೊತ್ತುಮಾಡಿಕೊಂಡು ಹೋಗಿ ನೆಲದ ಮೇಲೆ ಇಬ್ಬನಿ ಹೇಗೋ ಹಾಗೆಯೇ ಅವರ ಮೇಲೆ ಎರಗೋಣ. ಆಗ ಅವನೂ ಅವನ ಜನರೂ ನಮ್ಮ ಕೈಗೆ ಸಿಕ್ಕುವರು; ಒಬ್ಬನೂ ತಪ್ಪಿಸಿಕೊಳ್ಳಲಾರನು.</verse>
				<verse number="13">ಅವನು ಒಂದು ಪಟ್ಟಣವನ್ನು ಹೊಕ್ಕಿರುವುದು ಆದರೆ ಇಸ್ರಯೇಲರೆಲ್ಲರೂ ಹಗ್ಗಗಳನ್ನು ತೆಗೆದುಕೊಂಡು ಅಲ್ಲಿಗೆ ಬರಲಿ; ಆಗ ಆ ಊರನ್ನು ಒಂದು ಹರಳಾದರೂ ಉಳಿಯದಂತೆ ಹಗ್ಗಗಳಿಂದ ಎಳೆದುಕೊಂಡು ಹೋಗಿ ಹೊಳೆಯಲ್ಲಿ ಹಾಕಿಬಿಡೋಣ,” ಎಂದನು.</verse>
				<verse number="14">ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲ ಇಸ್ರಯೇಲರೂ, “ಅರ್ಕಿಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೆಯದಾಗಿದೆ,” ಎಂದರು. ಹೀಗೆ ಸರ್ವೇಶ್ವರ ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು, ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದರು.</verse>
				<verse number="15">ತರುವಾಯ ಹೂಷೈಯು, ಯಾಜಕರಾದ ಚಾದೋಕ ಹಾಗು ಎಬ್ಯಾತಾರರಿಗೆ, “ಅಹೀತೋಫೆಲನು ಅಬ್ಷಾಲೋಮನಿಗೂ ಇಸ್ರಯೇಲರ ಹಿರಿಯರಿಗೂ ಇಂಥಿಂಥ ಆಲೋಚನೆಯನ್ನು ಹೇಳಿದನು; ನಾನು ಹೀಗೆ ಹೇಳಿದೆ.</verse>
				<verse number="16">ಆದುದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀವು ಈ ರಾತ್ರಿ ಅಡವಿಯಲ್ಲಿ ನದಿದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡಿ; ಶೀಘ್ರವಾಗಿ ನದಿದಾಟಿ ಮುಂದೆ ಹೋಗಿಬಿಡಿ; ಇಲ್ಲವಾದರೆ ನೀವೂ ನಿಮ್ಮ ಜನರೂ ನಾಶವಾಗುವಿರಿ’ ಎಂದು ಹೇಳಿ ಕಳುಹಿಸಿರಿ,” ಎಂದನು.</verse>
				<verse number="17">ಯೋನಾತಾನ್ ಹಾಗು ಅಹೀಮಾಚರು ರೋಗೆಲಿನ ಬುಗ್ಗೆಯ ಬಳಿಯಲ್ಲಿದ್ದರು. ಇವರ ಮನೆಯ ದಾಸಿ ಎಲ್ಲಾ ವರ್ತಮಾನಗಳನ್ನು ಇವರಿಗೂ ಇವರ ಅರಸ ದಾವೀದನಿಗೂ ಮುಟ್ಟಿಸುವಂತೆ ಗೊತ್ತುಮಾಡಿಕೊಂಡಿದ್ದರು. ತಮ್ಮನ್ನು ಯಾರೂ ನೋಡಬಾರದೆಂದು ಇವರು ತಾವಾಗಿ ಊರೊಳಗೆ ಬರಲಿಲ್ಲ.</verse>
				<verse number="18">ಆದರೂ ಒಬ್ಬ ಯುವಕನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಬಹುರೀಮಿಗೆ ಓಡಿಹೋಗಿ ಅಲ್ಲಿ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದರು.</verse>
				<verse number="19">ಕೂಡಲೆ ಆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ ಗೋದಿಯ ನುಚ್ಚನ್ನು ಹರವಿದಳು. ಆದುದರಿಂದ ಅವರಿರುವ ಸಂಗತಿ ಯಾರಿಗೂ ಗೊತ್ತಾಗಲಿಲ್ಲ.</verse>
				<verse number="20">ಅಬ್ಷಾಲೋಮನ ಸೇವಕರು ಆ ಸ್ತ್ರೀಯ ಮನೆಗೆ ಹೋಗಿ, “ಅಹೀಮಾಚ್ ಮತ್ತು ಯೋನಾತಾನರೆಲ್ಲಿ?” ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆ, ” ಅವರು ಹಳ್ಳದಾಟಿ ಹೋಗಿಬಿಟ್ಟರು,” ಎಂದು ಉತ್ತರಕೊಟ್ಟಳು. ಸೇವಕರು ಅವರನ್ನು ಹುಡುಕುವುದಕ್ಕೆ ಹೋಗಿ ಕಾಣದೆ ಜೆರುಸಲೇಮಿಗೆ ಹಿಂದಿರುಗಿದರು.</verse>
				<verse number="21">ಅವರು ಹೋದಕೂಡಲೆ ಇವರಿಬ್ಬರೂ ಬಾವಿಯಿಂದ ಮೇಲಕ್ಕೆ ಬಂದು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ, “ಅಹೀತೋಫೆಲನು ನಿಮಗೆ ವಿರೋಧವಾಗಿ ಇಂಥಿಂಥ ಆಲೋಚನೆಯನ್ನು ಹೇಳಿದ್ದಾನೆ; ಆದುದರಿಂದ ಬೇಗನೆ ಎದ್ದು ನದಿದಾಟಿ ಹೋಗಿ,” ಎಂದು ಹೇಳಿದರು.</verse>
				<verse number="22">ಆಗ ದಾವೀದನೂ ಅವನ ಜೊತೆಯಲ್ಲಿದ್ದವರೆಲ್ಲರೂ ಜೋರ್ಡನ್ ನದಿಯನ್ನು ದಾಟಿದರು. ಉದಯವಾದಾಗ ದಾಟಬೇಕಾದವನೊಬ್ಬನೂ ಇರಲಿಲ್ಲ.</verse>
				<verse number="23">ಅಹೀತೋಫೆಲನು ತನ್ನ ಆಲೋಚನೆ ನಡೆಯಲಿಲ್ಲವೆಂದು ತಿಳಿದು, ಕತ್ತೆಗೆ ತಡಿಹಾಕಿಸಿ ಕುಳಿತುಕೊಂಡು ತನ್ನ ಊರಿಗೆ ಹೋಗಿದ್ದನು. ಮನೆಯ ವ್ಯವಸ್ಥೆಮಾಡಿ ಅನಂತರ ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.</verse>
				<verse number="24">ದಾವೀದನು ಮಹನಯಿಮಿಗೆ ಹೋದನು. ಇಸ್ರಯೇಲರನ್ನೆಲ್ಲಾ ಕೂಡಿಸಿಕೊಂಡು ಅಬ್ಷಾಲೋಮನು ಜೋರ್ಡನ್ ನದಿ ದಾಟಿದನು.</verse>
				<verse number="25">ಅವನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೇನಾಪತಿಯನ್ನಾಗಿ ನೇಮಿಸಿದನು. ಇಸ್ರಯೇಲನಾದ ಇತ್ರನು ನಾಹಾಷನ ಮಗಳೂ ಯೋವಾಬನ ತಾಯಿಯಾದ ಚೆರೂಯಳ ತಂಗಿಯೂ ಆದ ಅಬೀಗಲ್ ಎಂಬುವಳನ್ನು ಕೂಡಿದ್ದರಿಂದ ಹುಟ್ಟಿದವನು ಈ ಅಮಾಸನು.</verse>
				<verse number="26">ಇಸ್ರಯೇಲರೂ ಅಬ್ಷಾಲೋಮನೂ ಗಿಲ್ಯಾದ್ ದೇಶದಲ್ಲಿ ಪಾಳೆಯಮಾಡಿಕೊಂಡರು.</verse>
				<verse number="27">ದಾವೀದನು ಮಹನಯಿಮಿಗೆ ಬಂದಾಗ ಅಮ್ಮೋನಿಯರ ರಬ್ಬಾ ಊರಿನವನಾದ ನಾಹಾಷನ ಮಗ ಶೋಬಿ, ಲೋದೆಬಾರಿನ ಅಮ್ಮೀಯೇಲನ ಮಗ ಮಾಕೀರ್, ರೋಗೆಲೀಮ್ ಊರಿನ ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬವರು</verse>
				<verse number="28">ದಾವೀದನಿಗೂ ಅವನ ಜನರಿಗೂ ಹಾಸಿಗೆ, ಬಟ್ಟಲು, ಮಡಕೆ ಇವುಗಳನ್ನು ಕೊಟ್ಟರು; ಊಟಕ್ಕಾಗಿ ಗೋದಿ, ಜವೆಗೋದಿ ಹಿಟ್ಟು, ಹುರಿಗಾಳು,</verse>
				<verse number="29">ಅವರೆ, ಅಲಸಂದೆ, ಬೇಳೆ, ಜೇನುತುಪ್ಪ, ಬೆಣ್ಣೆ, ಕುರಿಗಿಣ್ಣು, ಹಸುವಿನ ಗಿಣ್ಣು, ಇವುಗಳನ್ನೂ ತಂದುಕೊಟ್ಟರು. ‘ಜನರು ಮರಳುಗಾಡಿನ ಪ್ರಯಾಣದಿಂದ ಹಸಿದಿದ್ದಾರೆ, ದಣಿದಿದ್ದಾರೆ ಹಾಗು ಬಾಯಾರಿದ್ದಾರೆ’ ಎಂಬ ಭಾವನೆಯಿಂದ ಇವುಗಳನ್ನು ತಂದುಕೊಟ್ಟರು.</verse>
			</chapter>
			<chapter number="18">
				<verse number="1">ತರುವಾಯ ಅರಸನಾದ ದಾವೀದನು ತನ್ನ ಹತ್ತಿರ ಇದ್ದ ಸೈನಿಕರನ್ನು ಎಣಿಸಿ ಅವರ ಮೇಲೆ ಸಹಸ್ರಾಧಿಪತಿಗಳನ್ನೂ ಶತಾಧಿಪತಿಗಳನ್ನೂ ನೇಮಿಸಿದನು.</verse>
				<verse number="2">ಅವನು ಸೈನ್ಯವನ್ನು ಮೂರು ಪಂಗಡಗಳಾಗಿ ವಿಭಾಗಿಸಿ ಒಂದು ಪಂಗಡವನ್ನು ಯೋವಾಬನಿಗೂ, ಇನ್ನೊಂದನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಗೂ, ಮತ್ತೊಂದನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿ, “ನಾನೂ ನಿಮ್ಮ ಸಂಗಡ ಬರುತ್ತೇನೆ,” ಎಂದು ಹೇಳಿದನು.</verse>
				<verse number="3">ಆಗ ಸೈನಿಕರು, “ನೀವು ಬರಬಾರದು; ನಾವು ಸೋತು ಓಡಿಹೋದರೆ ಶತ್ರುಗಳು ಲಕ್ಷಿಸುವುದಿಲ್ಲ; ನಮ್ಮಲ್ಲಿ ಅರ್ಧಜನ ಸತ್ತರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ ಹತ್ತು ಸಾವಿರ ಜನರ ಬೆಲೆ ನಿಮ್ಮೊಬ್ಬರಿಗೇ ಉಂಟು. ತಾವು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು,” ಎಂದರು.</verse>
				<verse number="4">ಅರಸನು, “ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ,” ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿ, ಸಾವಿರ ಸಾವಿರ ಮಂದಿಯಾಗಿ ಹೊರಟರು.</verse>
				<verse number="5">ಅರಸನು ಯೋವಾಬ್, ಅಬೀಷೈ ಹಾಗು ಇತ್ತೈ ಎಂಬವರಿಗೆ, “ನನ್ನ ಸಲುವಾಗಿ ಯುವಕ ಅಬ್ಷಾಲೋಮನಿಗೆ ಹಾನಿಮಾಡಬೇಡಿ,” ಎಂದು ಆಜ್ಞಾಪಿಸಿದನು. ದಾವೀದನು ಸೇನಾಪತಿಗಳಿಗೆ ಕೊಟ್ಟ ಈ ಅಪ್ಪಣೆ ಸೈನ್ಯದವರಿಗೆಲ್ಲಾ ಕೇಳಿಸಿತು.</verse>
				<verse number="6">ಅನಂತರ ಸೈನಿಕರು ಇಸ್ರಯೇಲರಿಗೆ ವಿರೋಧವಾಗಿ ಹೊರಟು ಬಯಲಿಗೆ ಬಂದರು. ಎಫ್ರಯಿಮ್ ಕಾಡಿನಲ್ಲಿ ಯುದ್ಧನಡೆಯಿತು.</verse>
				<verse number="7">ಇಸ್ರಯೇಲರು ದಾವೀದನ ಸೈನಿಕರಿಂದ ಪೂರ್ಣವಾಗಿ ಪರಾಭವಗೊಂಡರು. ಆ ದಿನ ಇಪ್ಪತ್ತು ಸಾವಿರ ಜನರು ಹತರಾದರು.</verse>
				<verse number="8">ಯುದ್ಧವು ಸುತ್ತಣ ಪ್ರದೇಶಗಳಿಗೆ ಹಬ್ಬಿಕೊಂಡಿತು. ಆ ದಿನ ಕತ್ತಿಯಿಂದ ಸತ್ತವರಿಗಿಂತ, ಮರುಳುಗಾಡಿನಲ್ಲಿ ಸತ್ತವರ ಸಂಖ್ಯೆಯೇ ಹೆಚ್ಚಾಗಿತ್ತು.</verse>
				<verse number="9">ಅಬ್ಷಾಲೋಮನು ದಾವೀದನ ಸೇವಕರ ಕೈಗೆ ಸಿಕ್ಕಿದನು. ಅದು ಹೇಗೆಂದರೆ, ಅವನು ಹತ್ತಿದ್ದ ಹೇಸರಗತ್ತೆ ಒಂದು ದೊಡ್ಡ ಓಕ್ ಮರದ ಕೆಳಗೆ ಹಾದುಹೋಗುವಾಗ ಅವನ ತಲೆ ನಿಬಿಡವಾದ ಅದರ ಕೊಂಬೆಗಳಲ್ಲಿ ಸಿಕ್ಕಿಕೊಂಡಿತು; ಆ ಹೇಸರಗತ್ತೆ ಅವನ ಕೆಳಗಿನಿಂದ ಓಡಿಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯೆ ನೇತಾಡಬೇಕಾಯಿತು.</verse>
				<verse number="10">ಇದನ್ನು ನೋಡಿದ ಒಬ್ಬ ವ್ಯಕ್ತಿ ಯೋವಾಬನಿಗೆ, “ನೋಡಿ, ಆ ಓಕ್ ಮರದಲ್ಲಿ ಅಬ್ಷಾಲೋಮನು ನೇತಾಡುತ್ತಿರುವುದನ್ನು ಕಂಡೆ,” ಎಂದು ಹೇಳಿದನು.</verse>
				<verse number="11">ಯೋವಾಬನು, “ನೀನು ಕಂಡಕೂಡಲೆ ಏಕೆ ಅವನನ್ನು ಕಡಿದು ನೆಲಕ್ಕುರುಳಿಸಲಿಲ್ಲ? ಹಾಗೆ ಮಾಡಿದ್ದರೆ, ನಾನೇ ನಿನಗೆ ಹತ್ತು ಬೆಳ್ಳಿನಾಣ್ಯಗಳನ್ನೂ ಒಂದು ನಡುಕಟ್ಟನ್ನೂ ಕೊಡುತ್ತಿದ್ದೆ,” ಎಂದನು.</verse>
				<verse number="12">ಅದಕ್ಕೆ ಆ ವ್ಯಕ್ತಿ, “ನೀವು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಇಟ್ಟರೂ ಅರಸರ ಮಗನಿಗೆ ವಿರೋಧವಾಗಿ ಕೈಯೆತ್ತೆನು. ಅರಸರು ನಮ್ಮೆಲ್ಲರಿಗೆ ಕೇಳಿಸುವಂತೆ ನಿಮಗೆ, ಅಬೀಷೈಗೆ ಹಾಗು ಇತ್ತೈಗೆ, ‘ಜಾಗರೂಕತೆಯಿಂದಿರಿ! ಆ ಯುವಕ ಅಬ್ಷಾಲೋಮನನ್ನು ಯಾರೂ ಮುಟ್ಟಬಾರದು’ ಎಂದು ಆಜ್ಞಾಪಿಸಿದರಲ್ಲವೇ?</verse>
				<verse number="13">ನಾನು ಅವನ ಪ್ರಾಣಕ್ಕೆ ಅಪಾಯವನ್ನು ಉಂಟುಮಾಡಿದರೆ ಅದು ಅರಸರಿಗೆ ಮರೆಯಾಗುವುದಿಲ್ಲ; ನೀವೂ ನನ್ನನ್ನು ಕೈಬಿಟ್ಟು ದೂರನಿಲ್ಲುವಿರಿ,” ಎಂದು ಉತ್ತರಕೊಟ್ಟನು.</verse>
				<verse number="14">ಆಗ ಯೋವಾಬನು, “ಇಲ್ಲಿ ನಿಂತು ನಿನ್ನೊಡನೆ ಸಮಯ ಕಳೆಯಲಾರೆ,” ಎಂದು ಹೇಳಿ ಕೂಡಲೆ ಕೈಯಲ್ಲಿ ಮೂರು ಈಟಿಗಳನ್ನು ತೆಗೆದುಕೊಂಡು ಹೋಗಿ ಅಬ್ಷಾಲೋಮನ ಎದೆಗೆ ತಿವಿದನು.</verse>
				<verse number="15">ಅವನು ಇನ್ನೂ ಜೀವದಿಂದ ಮರದಲ್ಲಿ ನೇತಾಡುತ್ತಿರುವಾಗಲೇ ಯೋವಾಬನ ಆಯುಧಗಳನ್ನು ಹೊರುವ ಹತ್ತುಮಂದಿ ಯುವಕರು ಬಂದು ಅವನನ್ನು ಕೊಂದುಹಾಕಿದರು.</verse>
				<verse number="16">ಕೂಡಲೆ ಯೋವಾಬನು ತನ್ನ ಜನರನ್ನು ತಡೆಯುವುದಕ್ಕಾಗಿ ಕಹಳೆಯನ್ನು ಊದಿಸಿದನು. ಸೈನ್ಯದವರೆಲ್ಲಾ ಇಸ್ರಯೇಲರನ್ನು ಬೆನ್ನಟ್ಟುವುದನ್ನು ಬಿಟ್ಟು ಹಿಂದಿರುಗಿದರು.</verse>
				<verse number="17">ಅವರು ಅಬ್ಷಾಲೋಮನ ಶವವನ್ನು ಆ ಕಾಡಿನಲ್ಲಿದ್ದ ಒಂದು ದೊಡ್ಡ ಗುಂಡಿಯೊಳಗೆ ಹಾಕಿ ಅದರ ಮೇಲೆ ದೊಡ್ಡ ಕಲ್ಲುರಾಶಿಯನ್ನು ಮಾಡಿ ಮುಚ್ಚಿದರು. ಇಸ್ರಯೇಲರಾದರೋ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.</verse>
				<verse number="18">ಅಬ್ಷಾಲೋಮನು ಇನ್ನೂ ಜೀವದಿಂದಿದ್ದಾಗ, ತನ್ನ ಹೆಸರನ್ನುಳಿಸುವ ಮಗ ಇಲ್ಲದ್ದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ಕಣಿವೆಯಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದನ್ನು ಇಂದಿನವರೆಗೂ ‘ಅಬ್ಷಾಲೋಮನ ಸ್ಮಾರಕಸ್ತಂಭ’ ಎಂದು ಕರೆಯಲಾಗುತ್ತದೆ.</verse>
				<verse number="19">ಚಾದೋಕನ ಮಗ ಅಹೀಮಾಚನು ಯೋವಾಬನಿಗೆ, “ಅಪ್ಪಣೆಯಾಗಲಿ, ನಾನು ಅರಸರ ಬಳಿಗೆ ಓಡಿಹೋಗಿ ಸರ್ವೇಶ್ವರಸ್ವಾಮಿ ವೈರಿಗಳಿಗೆ ಮುಯ್ಯಿತೀರಿಸಿದ್ದಾರೆಂಬ ಶುಭವರ್ತಮಾನವನ್ನು ತಿಳಿಸುತ್ತೇನೆ,” ಎಂದನು.</verse>
				<verse number="20">ಯೋವಾಬನು, “ಆ ಹೊತ್ತಿನ ಸುದ್ದಿಯನ್ನು ತೆಗೆದುಕೊಂಡು ಹೋಗತಕ್ಕವನು ನೀನಲ್ಲ; ಇನ್ನೊಂದು ಸಾರಿ ನಿನ್ನನ್ನು ಕಳುಹಿಸುತ್ತೇನೆ. ಈ ಹೊತ್ತು ಅರಸರ ಮಗನು ಸತ್ತಿರುವುದರಿಂದ ವರ್ತಮಾನವು ಶುಭವಾದುದ್ದಲ್ಲ,” ಎಂದು ಹೇಳಿ</verse>
				<verse number="21">ತನ್ನ ಬಳಿಯಲ್ಲಿದ್ದ ಒಬ್ಬ ಕೂಷ್ಯನನ್ನು ಕರೆದು ಅವನಿಗೆ, “ನೀನು ಹೋಗಿ ಕಂಡದ್ದನ್ನು ಅರಸರಿಗೆ ತಿಳಿಸು,” ಎಂದು ಆಜ್ಞಾಪಿಸಿದನು. ಅವನು ಯೋವಾಬನಿಗೆ ನಮಸ್ಕರಿಸಿ ಹೊರಟನು.</verse>
				<verse number="22">ಚಾದೋಕನ ಮಗ ಅಹೀಮಾಚನು ಪುನಃ ಯೋವಾಬನಿಗೆ, “ಆಗುವುದಾಗಲಿ, ದಯವಿಟ್ಟು ಆ ಕೂಷ್ಯನ ಹಿಂದೆ ಹೋಗುವುದಕ್ಕೆ ನನಗೆ ಅಪ್ಪಣೆಕೊಡಿ,” ಎಂದು ಬೇಡಿಕೊಂಡನು. ಅದಕ್ಕೆ ಯೋವಾಬನು, “ಮಗೂ, ಏಕೆ ಹೋಗಬೇಕೆನ್ನುತ್ತಿ? ಅದಕ್ಕಾಗಿ ನಿನಗೆ ಬಹುಮಾನವೇನೂ ಸಿಕ್ಕುವುದಿಲ್ಲ,” ಎಂದನು.</verse>
				<verse number="23">ಆದರೆ ಅಹೀಮಾಚನು ಮತ್ತೊಮ್ಮೆ, “ಚಿಂತೆಯಿಲ್ಲ, ನನ್ನನ್ನೂ ಕಳುಹಿಸಿ,” ಎಂದು ಒತ್ತಾಯಪಡಿಸಿದ್ದರಿಂದ ಯೋವಾಬನು, “ಹೋಗು,” ಎಂದು ಹೇಳಿದನು. ಆಗ ಅಹೀಮಾಚನು ಜೋರ್ಡನ್ ತಗ್ಗಿನಲ್ಲಿರುವ ದಾರಿಯನ್ನು ಹಿಡಿದು ಆ ಕೂಷ್ಯನಿಗಿಂತ ಮುಂದಾಗಿ ಓಡಿದನು‍.</verse>
				<verse number="24">ದಾವೀದನು ಎರಡು ಬಾಗಿಲುಗಳ ಮಧ್ಯೆ ಕುಳಿತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರನು ಗೋಪುರದ ಮಾಳಿಗೆಯನ್ನು ಹತ್ತಿ ಪಾಗಾರದ ಬಳಿಯಲ್ಲಿ ನಿಂತು ನೋಡಲು ಒಂಟಿಗನಾಗಿ ಬರುವ ಒಬ್ಬ ವ್ಯಕ್ತಿಯನ್ನು ಕಂಡನು.</verse>
				<verse number="25">ಅವನು ಕೂಡಲೆ ದಾವೀದನಿಗೆ ತಿಳಿಸಿದನು. ದಾವೀದನು, “ಅವನು ಒಬ್ಬನಾಗಿ ಇದ್ದರೆ ಸಮಾಚಾರ ತರುವವನಾಗಿರಬಹುದು,” ಎಂದನು. ಆ ವ್ಯಕ್ತಿ ಬರಬರುತ್ತಾ ಸಮೀಪವಾದನು.</verse>
				<verse number="26">ಅಷ್ಟರಲ್ಲಿ ಕಾವಲುಗಾರನು ಓಡುತ್ತಾ ಬರುವ ಇನ್ನೊಬ್ಬನನ್ನು ಕಂಡು ದ್ವಾರಪಾಲಕನ ಮುಖಾಂತರ, “ಇಗೋ, ಇನ್ನೊಬ್ಬನು ಒಂಟಿಗನಾಗಿ ಬರುತ್ತಿದ್ಪಾನೆ,” ಎಂದು ಅರಸನಿಗೆ ತಿಳಿಸಿದನು. ಅರಸನು, “ಹಾಗಾದರೆ ಅವನೂ ಸಮಾಚಾರ ತರುವವನು,” ಎಂದು ಹೇಳಿದನು.</verse>
				<verse number="27">ಕಾವಲುಗಾರನು, “ಮುಂದಾಗಿ ಬರುತ್ತಿರುವವನ ಓಟ ಚಾದೋಕನ ಮಗನಾದ ಅಹೀಮಾಚನ ಓಟದ ಹಾಗೆ ಕಾಣುತ್ತದೆ,” ಎಂದನು. ಅದಕ್ಕೆ ಅರಸನು, “ಅವನು ಒಳ್ಳೆಯವನು; ಶುಭವರ್ತಮಾನ ತರುವವನು,” ಎಂದನು.</verse>
				<verse number="28">ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ!” ಎಂದು ಹೇಳಿ ಸಾಷ್ಟಾಂಗ ನಮಸ್ಕಾರ ಮಾಡಿದನು. “ಅರಸನಿಗೆ ವಿರುದ್ಧ ಬಂಡೆದ್ದವರನ್ನು ಅಧೀನಪಡಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!” ಎಂದನು.</verse>
				<verse number="29">ಆಗ ಅರಸನು, “ಆ ಯುವಕ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೋ?” ಎಂದು ಕೇಳಿದನು. ಅದಕ್ಕೆ ಅಹೀಮಾಚನು, “ಯೋವಾಬನು ಒಡೆಯರ ಸೇವಕನಾದ ನನ್ನನ್ನು ಕಳುಹಿಸುವಾಗ ನಾನು ಒಂದು ದೊಡ್ಡ ದೊಂಬಿಯನ್ನು ಕಂಡೆ.ಆದರೆ ಸಂಗತಿಯೇನೆಂಬುದು ನನಗೆ ಗೊತ್ತಾಗಲಿಲ್ಲ,” ಎಂದು ಉತ್ತರಕೊಟ್ಟನು.</verse>
				<verse number="30">ಆಗ ಅರಸನು, “ನೀನು ಇತ್ತ ನಿಲ್ಲು,” ಎಂದು ಆಜ್ಞಾಪಿಸಿದನು.; ಅವನು ಅಂತೆಯೇ ನಿಂತನು.</verse>
				<verse number="31">ಅಷ್ಟರಲ್ಲಿ ಕೂಷ್ಯನೂ ಬಂದು, “ನನ್ನ ಒಡೆಯರಾದ ಅರಸರಿಗೆ ಶುಭವರ್ತಮಾನ ತಂದಿದ್ದೇನೆ; ಸರ್ವೇಶ್ವರಸ್ವಾಮಿ ನಿಮಗೆ ವಿರುದ್ಧ ಬಂಡೆದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾರೆ,” ಎಂದನು.</verse>
				<verse number="32">ಅರಸನು ಅವನನ್ನು, “ಆ ಯುವಕ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೆಯೋ?’ ಎಂದು ಕೇಳಿದನು. ಅವನು, “ನನ್ನ ಒಡೆಯರಾದ ಅರಸರ ಶತ್ರುಗಳಿಗೂ, ಅವರಿಗೆ ಕೇಡು ಮಾಡುವುದಕ್ಕೆ ನಿಂತವರೆಲ್ಲರಿಗೂ ಆ ಯುವಕನಿಗಾದ ಗತಿಯೇ ಆಗಲಿ!” ಎಂದು ಉತ್ತರಕೊಟ್ಟನು.</verse>
				<verse number="33">ಇದನ್ನು ಕೇಳಿದ್ದೇ ಅರಸನ ಎದೆಯೊಡೆಯಿತು. ಅವನು, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು! ಅಬ್ಷಾಲೋಮನೇ, ನನ್ನ ಮಗನೇ ಮಗನೇ,” ಎಂದು ಕೂಗಿ ಗೋಳಿಡುತ್ತಾ ಹೆಬ್ಬಾಗಿಲಿನ ಮೇಲಿದ್ದ ಕೋಣೆಗೆ ಹೋದನು.</verse>
			</chapter>
			<chapter number="19">
				<verse number="1">ಅರಸನು ಅಬ್ಷಾಲೋಮನಿಗಾಗಿ ಅಳುತ್ತಾ ಗೋಳಾಡುತ್ತಾ ಇದ್ದಾನೆಂಬ ಸಮಾಚಾರ ಯೋವಾಬನಿಗೆ ಮುಟ್ಟಿತು.</verse>
				<verse number="2">ಅರಸನು ಮಗನಿಗಾಗಿ ಪ್ರಲಾಪಿಸುತ್ತಿದ್ದಾನೆಂಬುದು ಎಲ್ಲ ಜನರಿಗೂ ಗೊತ್ತಾಗಿ ಅವರ ಜಯಘೋಷ ಗೋಳಾಟವಾಗಿ ಮಾರ್ಪಟ್ಟಿತು.</verse>
				<verse number="3">ಜನರು ಆ ದಿನದ ಯುದ್ಧದಲ್ಲಿ ಸೋತು ಓಡಿಬಂದಿರುವವರೋ ಎಂಬಂತೆ, ನಾಚಿಕೆಯಿಂದ ಕಳ್ಳತನವಾಗಿ ಊರನ್ನು ಹೊಕ್ಕರು.</verse>
				<verse number="4">ಅರಸನು ತನ್ನ ಮುಖ ಮುಚ್ಚಿಕೊಂಡು, “ಮಗ ಅಬ್ಷಾಲೋಮನೇ, ಅಬ್ಷಾಲೋಮನೇ, ನನ್ನ ಮಗನೇ, ಮಗನೇ,” ಎಂದು ಬಹಳವಾಗಿ ಗೋಳಾಡಿದನು.‍</verse>
				<verse number="5">ಯೋವಾಬನು ಅರಸನ ಬಳಿಗೆ ಹೋಗಿ, “ನಿಮ್ಮನ್ನೂ ನಿಮ್ಮ ಗಂಡುಹೆಣ್ಣು ಮಕ್ಕಳನ್ನೂ ಹೆಂಡತಿಯರನ್ನೂ ಉಪಪತ್ನಿಯರನ್ನೂ ರಕ್ಷಿಸಿದಂಥ ನಿಮ್ಮ ಸೇವಕರನ್ನು ಈ ದಿನ ಅಪಮಾನಪಡಿಸಿದಿರಿ.</verse>
				<verse number="6">ನೀವು ಶತ್ರುಗಳನ್ನು ಪ್ರೀತಿಸುವವರೂ ಮಿತ್ರರನ್ನು ದ್ವೇಷಿಸುವವರೂ ಆಗಿದ್ದೀರಿ; ನೀವು ನಿಮ್ಮ ಸೇನಾಧಿಪತಿಗಳನ್ನೂ ಸೈನಿಕರನ್ನೂ ಲಕ್ಷಿಸುವವರಲ್ಲವೆಂದು ಈಗ ತೋರಿಸಿಕೊಟ್ಟಿರಿ. ಈ ದಿನ ನಾವೆಲ್ಲರೂ ಸತ್ತು ಅಬ್ಷಾಲೋಮನೊಬ್ಬನೇ ಉಳಿದಿದ್ದರೆ ನಿಮಗೆ ಸಂತೋಷವಾಗುತ್ತಿತ್ತೆಂದು ಇದರಿಂದ ತಿಳಿಯಬೇಕಷ್ಟೆ!</verse>
				<verse number="7">ಈಗ ಎದ್ದು ಹೋಗಿ ನಿಮ್ಮ ಸೇವಕರನ್ನು ದಯಾಭಾವದಿಂದ ಮಾತಾಡಿಸಿ, ನೀವು ಹೀಗೆ ಮಾಡದಿದ್ದರೆ ಸರ್ವೇಶ್ವರನಾಣೆ, ಸಾಯಂಕಾಲವಾಗುವಷ್ಟರಲ್ಲಿ ಎಲ್ಲರೂ ನಿಮ್ಮನ್ನು ಬಿಟ್ಟುಹೋಗುವರು. ಯೌವನಕಾಲದಿಂದ ಈವರೆಗೆ ನಿಮಗೆ ಬಂದೊದಗಿದ ಕೇಡುಗಳಲ್ಲಿ ಇದು ದೊಡ್ಡದಾಗುವುದು,” ಎಂದು ಹೇಳಿದನು.</verse>
				<verse number="8">ಆಗ ಅರಸನು ಎದ್ದು ಬಂದು ಊರುಬಾಗಿಲಲ್ಲಿ ಕುಳಿತುಕೊಂಡನು. “ಇಗೋ, ಅರಸರು ಊರುಬಾಗಿಲಲ್ಲಿ ಕುಳಿತುಕೊಂಡಿದ್ದಾರೆ,” ಎಂಬ ಸುದ್ದಿ ಪ್ರಜೆಗಳಿಗೆ ಮುಟ್ಟಿದಾಗ ಅವರೆಲ್ಲರೂ ಬಂದು ಅವನ ಸುತ್ತಲೂ ನೆರೆದರು.</verse>
				<verse number="9">ಇಸ್ರಯೇಲರೆಲ್ಲರು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋಗಿದ್ದರು. ಇಸ್ರಯೇಲ್ ಕುಲಗಳ ಜನರೆಲ್ಲರು, “ಅರಸ ದಾವೀದನು ನಮ್ಮನ್ನು ಫಿಲಿಷ್ಟಿಯರ ಕೈಯಿಂದಲೂ ಬೇರೆ ಎಲ್ಲಾ ವೈರಿಗಳ ಕೈಯಿಂದಲೂ ತಪ್ಪಿಸಿ ಕಾಪಾಡಿದ. ಆದರೆ ಅಬ್ಷಾಲೋಮನ ಕಾರಣ ನಾಡನ್ನೇ ಬಿಟ್ಟು ಓಡಿಹೋಗುವಂತೆ ಮಾಡಿದ.</verse>
				<verse number="10">ಆದರೆ ನಾವು ಅಭಿಷೇಕಿಸಿದ ಅಬ್ಷಾಲೋಮನು ಯುದ್ಧದಲ್ಲಿ ಸತ್ತ. ಹೀಗಿರುವಲ್ಲಿ ಅರಸ ದಾವೀದನನ್ನು ಮರಳಿ ಕರೆದುಕೊಂಡು ಬರಬಾರದೇಕೆ? ಸುಮ್ಮನೆ ಕುಳಿತಿರುವುದೇಕೆ?” ಎಂದು ಮಾತಾಡಿಕೊಂಡರು.</verse>
				<verse number="11">ಇಸ್ರಯೇಲರು ಹೀಗೆ ಮಾತಾಡಿಕೊಂಡ ಸಮಾಚಾರ ದಾವೀದನಿಗೆ ಮುಟ್ಟಿತು. ಅವನು ಯಾಜಕರಾದ ಚಾದೋಕ್ ಹಾಗು ಎಬ್ಯಾತಾರರಿಗೆ, “ನೀವು ನನ್ನ ಹೆಸರಿನಲ್ಲಿ ಯೆಹೂದಕುಲದ ಹಿರಿಯರಿಗೆ, ‘ಅರಸನಾದ ನನ್ನನ್ನು ಮತ್ತೆ ಅರಮನೆಗೆ ಕರೆದುಕೊಂಡು ಹೋಗುವುದರಲ್ಲಿ ನೀವೇಕೆ ಹಿಂದುಳಿದಿರುವಿರಿ?</verse>
				<verse number="12">ನೀವು ನನ್ನ ರಕ್ತಸಂಬಂಧಿಗಳಾದ ಸಹೋದರರು; ಆದುದರಿಂದ ನನ್ನನ್ನು ಕರೆದುಕೊಂಡು ಹೋಗುವುದರಲ್ಲಿ ನೀವು ಹಿಂದುಳಿದಿರುವುದು ಸರಿಯಲ್ಲ’</verse>
				<verse number="13">ಎಂಬುದಾಗಿ ತಿಳಿಸಿರಿ. ಅದಲ್ಲದೆ ಅಮಾಸನಿಗೆ, ‘ನೀನೂ ನನ್ನ ರಕ್ತಸಂಬಂಧಿಯಾಗಿದ್ದಿ; ನಾನು ಯೋವಾಬನ ಬದಲಿಗೆ ನಿನ್ನನ್ನೇ ನಿತ್ಯಸೇನಾಪತಿಯನ್ನಾಗಿ ಮಾಡುತ್ತೇನೆ. ಹಾಗೆ ಮಾಡದಿದ್ದರೆ ಸರ್ವೇಶ್ವರ ನನಗೆ ಮಾಡಬೇಕಾದದ್ದನ್ನು ಮಾಡಲಿ,’ ಎಂಬುದಾಗಿಯೂ ತಿಳಿಸಿರಿ,” ಎಂದು ಹೇಳಿ ಕಳುಹಿಸಿದನು.</verse>
				<verse number="14">ಆಗ ಯೆಹೂದ್ಯರೆಲ್ಲರೂ ಏಕ ಮನಸ್ಸಿನಿಂದ ಅರಸನ ಕಡೆಗೆ ತಿರುಗಿಕೊಂಡು ಅವನಿಗೆ, ” ನೀವು ನಿಮ್ಮ ಎಲ್ಲಾ ಸೇವಕರೊಡನೆ ಮರಳಿ ಬನ್ನಿ,” ಎಂದು ಹೇಳಿಕಳುಹಿಸಿದರು.</verse>
				<verse number="15">ಅರಸನು ಸ್ವದೇಶಕ್ಕೆ ಹೋಗಬೇಕೆಂದು ಹೊರಟು ಜೋರ್ಡನಿಗೆ ಬಂದಾಗ ಯೆಹೂದಕುಲದವರು ಅವನನ್ನು ಸ್ವಾಗತಿಸುವುದಕ್ಕೂ ಜೋರ್ಡನ್ ನದಿಯನ್ನು ದಾಟಿಸುವುದಕ್ಕೂ ಗಿಲ್ಗಾಲಿಗೆ ಬಂದರು.</verse>
				<verse number="16">ಬೆನ್ಯಾಮೀನ್ ಕುಲದ ಗೇರನ ಮಗನೂ ಬಹುರೀಮಿನವನೂ ಆದ ಶಿಮ್ಮಿಯು ತವಕದಿಂದ ಬಂದು ಅರಸನಾದ ದಾವೀದನನ್ನು ಸ್ವಾಗತಿಸುವುದಕ್ಕೆ ಯೆಹೂದ ಕುಲದವರನ್ನು ಕೂಡಿಕೊಂಡನು.</verse>
				<verse number="17">ಅವನ ಜೊತೆಯಲ್ಲಿ ಸಾವಿರ ಮಂದಿ ಬೆನ್ಯಾಮೀನ್ಯರಿದ್ದರು. ಇದಲ್ಲದೆ ಸೌಲನ ಮನೆಯ ಸೇವಕನಾದ ಚೀಬನು ತನ್ನ ಹದಿನೈದು ಮಂದಿ ಮಕ್ಕಳನ್ನೂ ಇಪ್ಪತ್ತು ಮಂದಿ ಸೇವಕರನ್ನೂ ಕರೆದುಕೊಂಡು ಬಂದನು;</verse>
				<verse number="18">ಅರಸನ ಮುಂದೆಯೇ ಪೂರ್ಣಾಸಕ್ತಿಯಿಂದ ಜೋರ್ಡನ್ ನದಿಯಲ್ಲಿಳಿದು ಅರಸನ ಮನೆಯವರನ್ನು ದಾಟಿಸುವುದಕ್ಕೂ ಅವರಿಗೆ ಬೇಕಾದ ಸಹಾಯಮಾಡುವುದಕ್ಕೂ ದಡದಿಂದ ದಡಕ್ಕೆ ಹೋಗುತ್ತಾ ಬರುತ್ತಾ ಇದ್ದನು. ಅರಸನು ಜೋರ್ಡನ್ ನದಿಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿಮ್ಮಿಯು ಸಾಷ್ಟಾಂಗ ನಮಸ್ಕಾರ ಮಾಡಿದನು.</verse>
				<verse number="19">:ಒಡೆಯರು ನನ್ನನ್ನು ಅಪರಾಧಿಯೆಂದೆಣಿಸದಿರಲಿ; ನನ್ನ ಒಡೆಯರು ಜೆರುಸಲೇಮನ್ನು ಬಿಟ್ಟುಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಅವರು ನೆನಸದಿರಲಿ, ಲಕ್ಷಿಸದಿರಲಿ.</verse>
				<verse number="20">ಒಡೆಯರೇ, ತಮ್ಮ ಸೇವಕನಾದ ನಾನು ಪಾಪಮಾಡಿದೆನೆಂದು ಒಪ್ಪಿಕೊಳ್ಳುತ್ತೇನೆ. ಆದುದರಿಂದಲೇ ನಾನು ಈ ದಿನ ಅರಸನನ್ನು ಸ್ವಾಗತಿಸುವುದಕ್ಕೆ ಎಲ್ಲಾ ಜೋಸೇಫ್ಯರಲ್ಲಿ ಮೊದಲಿಗನಾಗಿ ಬಂದಿದ್ದೇನೆ,” ಎಂದು ಹೇಳಿದನು.</verse>
				<verse number="21">ಚೆರೂಯಳ ಮಗ ಅಬೀಷೈಯು, “ಸರ್ವೇಶ್ವರನ ಅಭಿಷಿಕ್ತನನ್ನು ಶಪಿಸಿದ್ದಕ್ಕಾಗಿ ಶಿಮ್ಮಿಗೆ ಮರಣದಂಡನೆಯಾಗಬೇಕಲ್ಲವೇ?’ ಎಂದನು.</verse>
				<verse number="22">ಅದಕ್ಕೆ ದಾವೀದನು, “ಚೆರೂಯಳ ಮಕ್ಕಳೇ, ನನಗೆ ನಿಮ್ಮ ಗೊಡವೆಯೇ ಬೇಡ; ನೀವು ಈ ದಿನ ನನ್ನನ್ನು ಆ ಕೃತ್ಯಕ್ಕೆ ಪ್ರೇರಿಸುವವರಾಗಿದ್ದೀರಿ. ಇಂಥ ದಿನದಲ್ಲಿ ಇಸ್ರಯೇಲರಲ್ಲಿ ಒಬ್ಬನಿಗೆ ಮರಣದಂಡನೆ ಆಗುವುದು ಸರಿಯೇ? ನಾನು ಇಸ್ರಯೇಲರ ಅರಸನೆಂಬುವುದು ಈ ದಿನ ಸ್ಪಷ್ಟವಾಗಿ ಗೊತ್ತಾಯಿತು,” ಎಂದು ನುಡಿದನು.</verse>
				<verse number="23">ಅನಂತರ ಅರಸನು ಶಿಮ್ಮಿಗೆ, “ನಿನಗೆ ಮರಣಶಿಕ್ಷೆಯಾಗುವುದಿಲ್ಲ,” ಎಂದು ಪ್ರಮಾಣಮಾಡಿ ಹೇಳಿದನು.</verse>
				<verse number="24">ತರುವಾಯ ಸೌಲನ ಮೊಮ್ಮಗನಾದ ಮೆಫೀಬೋಶೆತನು ಅರಸನ ದರ್ಶನಕ್ಕೆ ಬಂದನು. ಅರಸನು ಜೆರುಸಲೇಮನ್ನು ಬಿಟ್ಟಂದಿನಿಂದ ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನು ತನ್ನ ಪಾದಗಳನ್ನು ತೊಳೆದುಕೊಂಡಿರಲಿಲ್ಲ; ಮೀಸೆಯನ್ನು ಕತ್ತರಿಸಿರಲಿಲ್ಲ; ಬಟ್ಟೆಗಳನ್ನು ಒಗೆಸಿಕೊಂಡಿರಲಿಲ್ಲ.</verse>
				<verse number="25">ಇವನು ಜೆರುಸಲೇಮಿನಿಂದ ಅರಸನ ದರ್ಶನಕ್ಕೆ ಬಂದಾಗ ಅರಸನು, “ಮೆಫೀಬೋಶೆತನೇ, ನೀನು ನನ್ನ ಸಂಗಡ ಏಕೆ ಬರಲಿಲ್ಲ?” ಎಂದು ಕೇಳಿದನು.</verse>
				<verse number="26">ಅವನು, “ಒಡೆಯರೇ, ಅರಸರೇ, ನನ್ನ ಸೇವಕ ನನ್ನನ್ನು ವಂಚಿಸಿದ. ಕುಂಟನಾದ ನಾನು ಅವನಿಗೆ, ‘ಕತ್ತೆಗೆ ತಡಿಹಾಕು, ನಾನು ಕುಳಿತುಕೊಂಡು ಅರಸರ ಜೊತೆಯಲ್ಲೇ ಹೋಗಬೇಕು’ ಎಂದು ಆಜ್ಞಾಪಿಸಿದೆ.</verse>
				<verse number="27">ಅವನು ಹಾಗೆ ಮಾಡದೆ ನನ್ನ ಒಡೆಯರಾದ ಅರಸರ ಬಳಿಗೆ ಬಂದು ನನ್ನ ವಿಷಯದಲ್ಲಿ ಚಾಡಿಹೇಳಿದ. ಅರಸರು ದೇವದೂತನ ಹಾಗಿರುತ್ತೀರಿ. ತಮಗೆ ಸರಿಕಂಡದ್ದನ್ನು ಮಾಡಿ.</verse>
				<verse number="28">ನನ್ನ ತಂದೆಯ ಮನೆಯವರೆಲ್ಲರೂ ಅರಸರಾದ ನನ್ನ ಒಡೆಯರ ದೃಷ್ಟಿಯಲ್ಲಿ ಮರಣಕ್ಕೆ ಪಾತ್ರರಾಗಿದ್ದರು. ಆದರೂ ತಮ್ಮ ಸೇವಕನಾದ ನನ್ನನ್ನು ಭೋಜನಕ್ಕೆ ತಮ್ಮ ಪಂಕ್ತಿಯಲ್ಲಿ ಕುಳ್ಳಿರಿಸಿಕೊಂಡಿರಿ. ಅರಸರಿಗೆ ಹೆಚ್ಚಾಗಿ ಮೊರೆ ಇಡುವುದಕ್ಕೆ ನಾನು ಯೋಗ್ಯನಲ್ಲ,” ಎಂದು ಉತ್ತರಕೊಟ್ಟನು.</verse>
				<verse number="29">ಆಗ ಅರಸನು, “ಹೆಚ್ಚು ಮಾತು ಏಕೆ? ಹೊಲವನ್ನು ನೀನು ಹಾಗು ಚೀಬ ಭಾಗಮಾಡಿಕೊಳ್ಳಬೇಕು. ಇದೇ ನನ್ನ ತೀರ್ಪು,” ಎಂದು ಹೇಳಿದನು.</verse>
				<verse number="30">ಅದಕ್ಕೆ ಮೆಫೀಬೋಶೆತನು, “ಚೀಬನು ಎಲ್ಲವನ್ನು ತಾನೇ ತೆಗೆದುಕೊಂಡರೂ ತೆಗೆದುಕೊಳ್ಳಲಿ; ನನ್ನ ಒಡೆಯರಾದ ಅರಸರು ತಮ್ಮ ಮನೆಗೆ ಸುರಕ್ಷಿತವಾಗಿ ಬಂದದ್ದೇ ಸಾಕು,” ಎಂದನು.</verse>
				<verse number="31">ಗಿಲ್ಯಾದ್ಯನಾದ ಬರ್ಜಿಲ್ಲೈ ಎಂಬುವನು ಅರಸನನ್ನು ಬೀಳ್ಕೊಡುವುದಕ್ಕಾಗಿ ರೋಗೆಲೀಮಿನಿಂದ ಜೋರ್ಡನಿಗೆ ಬಂದಿದ್ದನು.</verse>
				<verse number="32">ಇವನು ಎಂಬತ್ತು ವರ್ಷದ ಮುದುಕ. ಇವನು ಬಹು ಶ್ರೀಮಂತನಾಗಿದ್ದುದರಿಂದ ದಾವೀದನು ಮಹನಯಿಮಿನಲ್ಲಿದ್ದ ಅವಧಿಯಲ್ಲಿ ಅವನ ಜೀವನಕ್ಕೆ ಬೇಕಾದುದನ್ನು ಇವನೇ ಒದಗಿಸಿಕೊಡುತ್ತಿದ್ದನು.</verse>
				<verse number="33">ಅರಸನು ಆ ಬರ್ಜಿಲ್ಲೈಗೆ, “ನನ್ನ ಜೊತೆಯಲ್ಲಿ ನದಿಯ ಆಚೆಗೆ ಬಾ; ನಾನು ಜೆರುಸಲೇಮಿನಲ್ಲಿ ನಿನ್ನನ್ನು ಹತ್ತಿರವೇ ಇಟ್ಟುಕೊಂಡು ಸಾಕುತ್ತೇನೆ,” ಎಂದನು.</verse>
				<verse number="34">ಅದಕ್ಕೆ ಬರ್ಜಿಲ್ಲೈಯು, “ಇಷ್ಟು ವಯಸ್ಸು ಕಳೆದವನಾದ ನಾನು ಅರಸರ ಸಂಗಡ ಜೆರುಸಲೇಮಿಗೆ ಬರುವುದು ಹೇಗೆ?</verse>
				<verse number="35">ಈಗ ನಾನು ಎಂಬತ್ತು ವರ್ಷದವನು. ಒಳ್ಳೆಯದು ಕೆಟ್ಟದು ಇವುಗಳ ಭೇದ ನನಗಿನ್ನು ತಿಳಿಯುವುದೇ? ನಿಮ್ಮ ಸೇವಕನಾದ ನನಗೆ ಇನ್ನು ಅನ್ನಪಾನಗಳ ರುಚಿ ಗೊತ್ತಾಗುವುದೇ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೆಯೇ? ನಾನು ನನ್ನ ಒಡೆಯರಾದ ಅರಸರಿಗೆ ಸುಮ್ಮನೆ ಏಕೆ ಹೊರೆಯಾಗಿರಬೇಕು?</verse>
				<verse number="36">ನದಿ ದಾಟಿ ಸ್ವಲ್ಪ ದೂರಕ್ಕೆ ನಿಮ್ಮ ಸಂಗಡ ಬರುತ್ತೇನೆ. ಅರಸರಾದ ನೀವು ನನಗೇಕೆ ಇಂಥ ಉಪಕಾರ ಮಾಡಬೇಕು?</verse>
				<verse number="37">ದಯವಿಟ್ಟು ನಿಮ್ಮ ಸೇವಕನಾದ ನನಗೆ ಹಿಂದಿರುಗಿ ಹೋಗುವುದಕ್ಕೆ ಅಪ್ಪಣೆಯಾಗಲಿ; ನಾನು ನನ್ನ ತಂದೆತಾಯಿಗಳ ಸಮಾಧಿಯಿರುವ ಸ್ವಂತ ಊರಿಗೆ ಹೋಗಿ ಅಲ್ಲೇ ಸಾಯುವೆನು. ಇಗೋ, ಇಲ್ಲಿ ನಿಮ್ಮ ಸೇವಕನಾದ ಕಿಮ್ಹಾಮನಿರುತ್ತಾನೆ. ನನ್ನ ಒಡೆಯರಾದ ಅರಸರು ಇವನನ್ನು ಕರೆದುಕೊಂಡು ಹೋಗಿ ತಮ್ಮ ಇಷ್ಟವಿದ್ದಂತೆ ಇವನಿಗೆ ದಯೆತೋರಿಸಿ,” ಎಂದನು.</verse>
				<verse number="38">ಅದಕ್ಕೆ ಅರಸನು, “ಕಿಮ್ಹಾಮನು ನನ್ನ ಸಂಗಡ ಬರಲಿ; ಅವನಿಗೆ ನಿನ್ನ ಇಷ್ಟದಂತೆ ದಯೆತೋರುತ್ತೇನೆ. ಇನ್ನೂ ಏನೇನು ಮಾಡಬೇಕೆನ್ನುತ್ತೀಯೋ ಅದೆಲ್ಲವನ್ನು ಮಾಡುತ್ತೇನೆ,” ಎಂದು ಹೇಳಿದನು.</verse>
				<verse number="39">ಜನರೆಲ್ಲರು ನದಿ ದಾಟಿದರು. ಅರಸನು ದಾಟಿದ ಮೇಲೆ ಬರ್ಜಿಲ್ಲೈಯನ್ನು ಮುದ್ದಿಟ್ಟು ಆಶೀರ್ವದಿಸಿದನು. ಅನಂತರ ಬರ್ಜಿಲ್ಲೈಯು ತನ್ನ ಊರಿಗೆ ಮರಳಿದನು.</verse>
				<verse number="40">ಅರಸನು ಕಿಮ್ಹಾಮನೊಡನೆ ಗಿಲ್ಗಾಲಿಗೆ ತೆರಳಿದನು. ಎಲ್ಲ ಯೆಹೂದ್ಯರು ಹಾಗು ಇಸ್ರಯೇಲರಲ್ಲಿ ಅರ್ಧಜನರು ಅರಸನನ್ನು ಕರೆದುಕೊಂಡು ಹೋದರು.</verse>
				<verse number="41">ಆಗ ಇಸ್ರಯೇಲರೆಲ್ಲರು ಅರಸನ ಮುಂದೆ ಬಂದು, “ನಮ್ಮ ಸಹೋದರರಾದ ಯೆಹೂದ್ಯರು ನಮಗೆ ತಿಳಿಸದೆ ತಾವೇ ಹೋಗಿ ಅರಸರನ್ನೂ ಅವರ ಮನೆಯವರನ್ನೂ ಅವರೊಡನೆ ಇದ್ದ ಜನರನ್ನೂ ಜೋರ್ಡನ್ ನದಿದಾಟಿಸಿ ಕರೆದುಕೊಂಡು ಬಂದದ್ದೇಕೆ?” ಎಂದು ಕೇಳಿದರು.</verse>
				<verse number="42">ಅದಕ್ಕೆ ಯೆಹೂದ್ಯರೆಲ್ಲರು, “ಅರಸರು ನಮಗೆ ಸಮೀಪಬಂಧು; ನೀವು ಅದಕ್ಕಾಗಿ ಸಿಟ್ಟುಗೊಳ್ಳುವುದೇಕೆ? ನಾವೇನು ಅರಸರ ಖರ್ಚಿನಿಂದ ಊಟಮಾಡಿದೆವೋ? ಅವರು ನಮಗೆ ಏನಾದರೂ ಕೊಟ್ಟಿರುವರೋ?’ ಎಂದು ಉತ್ತರಕೊಟ್ಟರು.</verse>
				<verse number="43">ಆಗ ಇಸ್ರಯೇಲರು ಯೆಹೂದ್ಯರಿಗೆ, “ಅರಸರಲ್ಲಿ ನಮಗೆ ಹತ್ತುಪಾಲು ಉಂಟಲ್ಲವೆ? ದಾವೀದನ ವಿಷಯದಲ್ಲೂ ನಮಗೆ ಹೆಚ್ಚು ಉಂಟು. ಹೀಗಿರುವುದರಿಂದ ನೀವು ನಮ್ಮನ್ನು ತಿರಸ್ಕರಿಸಿದ್ದೇಕೆ? ನಮ್ಮ ಅರಸರನ್ನು ಕರೆದುಕೊಂಡು ಬರುವ ವಿಷಯದಲ್ಲಿ ಮೊದಲು ಮಾತಾಡಿದವರು ನಾವಲ್ಲವೇ?’ ಎಂದರು. ಇಸ್ರಯೇಲರ ವಾದಕ್ಕಿಂತ ಯೆಹೂದ್ಯರ ವಾದ ಉಗ್ರವಾಗಿತ್ತು.</verse>
			</chapter>
			<chapter number="20">
				<verse number="1">ಬೆನ್ಯಾಮೀನ್ ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ನೀಚ ವ್ಯಕ್ತಿ ಅಲ್ಲಿಗೆ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಯೇಲರೇ, ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ. ಜೆಸ್ಸೆಯನ ಮಗನಲ್ಲಿ ನಮಗೆ ಹಕ್ಕುಭಾದ್ಯತೆಯಿಲ್ಲ. ಪ್ರತಿ ಒಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ತೆರಳೋಣ,” ಎಂದನು.</verse>
				<verse number="2">ಆಗ ಇಸ್ರಯೇಲರೆಲ್ಲರೂ ದಾವೀದನನ್ನು ಬಿಟ್ಟು ಬಿಕ್ರೀಯ ಮಗನಾದ ಶೆಬನನ್ನು ಹಿಂಬಾಲಿಸಿದರು. ಆದರೆ ಯೆಹೂದ್ಯರು ತಮ್ಮ ಅರಸನನ್ನು ಅಂಟಿಕೊಂಡು ಜೋರ್ಡನ್ ತಗ್ಗಿನಿಂದ ಜೆರುಸಲೇಮಿನವರೆಗೂ ಅವನ ಜೊತೆಯಲ್ಲೇ ಹೋದರು.</verse>
				<verse number="3">ಅರಸನಾದ ದಾವೀದನು ಜೆರುಸಲೇಮಿಗೆ ಬಂದ ಮೇಲೆ ತಾನು ಮನೆಕಾಯುವುದಕ್ಕಾಗಿ ಇಟ್ಟಿದ್ದ ತನ್ನ ಹತ್ತು ಮಂದಿ ಉಪಪತ್ನಿಯರನ್ನು ಪ್ರತ್ಯೇಕವಾದ ಒಂದು ಮನೆಯಲ್ಲಿಟ್ಟು ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಆದರೆ ಅವರನ್ನು ತಿರುಗಿ ಕೂಡಲಿಲ್ಲ. ಅವರು ಜೀವದಿಂದ ಇರುವವರೆಗೂ ವಿಧವೆಯರಂತೆ ಇದ್ದು ಕಾವಲಲ್ಲಿರಬೇಕಾಯಿತು.</verse>
				<verse number="4">ಅನಂತರ ಅರಸನು ಅಮಾಸನಿಗೆ, “ನೀನು ಮೂರು ದಿನಗಳೊಳಗಾಗಿ ಯೆಹೂದ್ಯರನ್ನು ಕೂಡಿಸಿಕೊಂಡು ಇಲ್ಲಿ ಸಿದ್ಧವಾಗಿರು,” ಎಂದು ಆಜ್ಞಾಪಿಸಿದನು.</verse>
				<verse number="5">ಅವನು ಹೋಗಿ ಯೆಹೂದ್ಯರನ್ನು ಕೂಡಿಸಿದನು. ಆದರೆ ಅವನು ನೇಮಕವಾದ ಸಮಯಕ್ಕೆ ಬರದೆ ತಡಮಾಡಿದನು.</verse>
				<verse number="6">ಆದ್ದರಿಂದ ಅರಸನು ಅಬೀಷೈಗೆ, “ಅಬ್ಷಾಲೋಮನಿಗಿಂತ ಬಿಕ್ರೀಯ ಮಗನಾದ ಶೆಬನು ನಮಗೆ ಹೆಚ್ಚಿನ ಕೇಡು ಮಾಡುವಂತಿದೆ. ಆದುದರಿಂದ ನೀನು ನನ್ನ ಸ್ವಂತ ಆಳುಗಳನ್ನು ತೆಗೆದುಕೊಂಡು ಹೋಗಿ ಅವನನ್ನು ಬೆನ್ನಟ್ಟಿ ಬಂಧಿಸು. ಇಲ್ಲವಾದರೆ ಅವನು ನಮ್ಮ ಕಣ್ಣಿಗೆ ಮರೆಯಾಗಿ ಹೋಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಳ್ಳಬಹುದು,” ಎಂದನು.</verse>
				<verse number="7">ಆಗ ಅವನು ಯೋವಾಬನ ಸೈನಿಕರನ್ನೂ, ‘ಕೆರೇತ್ಯ’ ಹಾಗು ‘ಪೆಲೇತ್ಯ’ ಎಂಬ ಕಾವಲುದಂಡುಗಳನ್ನೂ ಎಲ್ಲಾ ಶೂರರನ್ನೂ ಕರೆದುಕೊಂಡು ಬಿಕ್ರೀಯ ಮಗನಾದ ಶೆಬನನ್ನು ಬೆನ್ನಟ್ಟುವುದಕ್ಕಾಗಿ ಜೆರುಸಲೇಮಿನಿಂದ ಹೊರಟನು.</verse>
				<verse number="8">ಅವರು ಗಿಬ್ಯೋನಿನಲ್ಲಿದ್ದ ದೊಡ್ಡ ಕಲ್ಲನ್ನು ಸಮೀಪಿಸಿದಾಗ ಅಮಾಸನು ಅವರೆದುರಿಗೆ ಬಂದನು. ಯುದ್ಧವಸ್ತ್ರಗಳನ್ನು ಧರಿಸಿಕೊಂಡಿದ್ದ ಯೋವಾಬನು ಅವನನ್ನು ವಂದಿಸುವುದಕ್ಕೆ ಹೋಗುತ್ತಿರುವಾಗ ಅವನ ಸೊಂಟಕ್ಕೆ ಕಟ್ಟಿದ್ದ ಕತ್ತಿ ಒರೆಯಿಂದ ಕೆಳಗೆ ಬಿದ್ದಿತು.</verse>
				<verse number="9">ಅವನು ಅಮಾಸನನ್ನು, “ಸಹೋದರಾ, ಕ್ಷೇಮವೇ?” ಎಂದು ಕೇಳಿ ಮುದ್ದಿಡುವುದಕ್ಕೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು, ಕೈಯಲ್ಲಿದ್ದ ಕತ್ತಿಯನ್ನು ಗಮನಿಸದಿದ್ದ ಅಮಾಸನ ಹೊಟ್ಟೆಯನ್ನು ಇರಿದನು.</verse>
				<verse number="10">ಅವನ ಕರುಳೆಲ್ಲಾ ಹೊರಗೆ ಬಂದುವು. ಎರಡನೆಯ ಸಾರಿ ಇರಿಯಬೇಕಾಗಿರಲಿಲ್ಲ; ಅಷ್ಟಕ್ಕೆ ಅವನು ಸತ್ತನು.</verse>
				<verse number="11">“ಯೋವಾಬನೂ ಅವನ ತಮ್ಮನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟುವುದಕ್ಕಾಗಿ ಮುಂದೆ ನಡೆದಾಗ ಯೋವಾಬನ ಆಳುಗಳಲ್ಲೊಬ್ಬನು ಅಮಾಸನ ಹತ್ತಿರ ನಿಂತು, “ದಾವೀದ ಹಾಗು ಯೋವಾಬರ ಕಡೆಯವರು ಯೋವಾಬನನ್ನು ಹಿಂಬಾಲಿಸಲಿ,” ಎಂದು ಕೂಗಿದನು.</verse>
				<verse number="12">ಮಾರ್ಗದ ಮಧ್ಯದಲ್ಲಿ ರಕ್ತದೊಳಗೆ ಹೊರಳಾಡುತ್ತಿದ್ದ ಅಮಾಸನನ್ನು ನೋಡುತ್ತಾ ಎಲ್ಲಾ ಜನರು ನಿಂತರು. ಬಂದವರೆಲ್ಲರೂ ಅಲ್ಲೇ ನಿಲ್ಲುವುದನ್ನು ಆ ಆಳು ಕಂಡು ಅಮಾಸನ ಶವವನ್ನು ದಾರಿಯಿಂದ ಎಳೆದು, ಹೊಲದಲ್ಲಿ ಹಾಕಿ, ಅದನ್ನು ಬಟ್ಟೆಯಿಂದ ಮುಚ್ಚಿದನು.</verse>
				<verse number="13">ಶವವನ್ನು ಆಚೆ ಹಾಕಿದ ನಂತರ ಜನರೆಲ್ಲರು ಬಿಕ್ರೀಯ ಮಗನಾದ ಶೆಬನನ್ನು ಬೆನ್ನಟ್ಟುವುದಕ್ಕಾಗಿ ಯೋವಾಬನನ್ನು ಹಿಂಬಾಲಿಸಿದರು.</verse>
				<verse number="14">ಶೆಬನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ಸಂಚರಿಸುತ್ತಾ ಅಬೇಲ್ಬೇತ್ಮಾಕಾ ಎಂಬಲ್ಲಿಗೆ ಬಂದನು. ಬೇರೆಯವರೆಲ್ಲರೂ ಕೂಡಿಕೊಂಡು ಅವನೊಡನೆ ಆ ಊರನ್ನು ಸೇರಿದರು.</verse>
				<verse number="15">ಯೋವಾಬನ ಕಡೆಯವರು ಅಬೇಲ್ಬೇತ್ಮಾಕಾ ಊರಿಗೆ ಮುತ್ತಿಗೆಹಾಕಿದರು. ಅದರ ಹೊರಗೋಡೆಯ ಹತ್ತಿರ ಒಂದು ಮಣ್ಣಿನ ದಿಬ್ಬವನ್ನು ಮಾಡಿ ಗೋಡೆಯ ಕೆಳಗೆ ಅಗೆಯುತ್ತಾ ಅದನ್ನು ಕೆಡವಿಬಿಡುವುದಕ್ಕೆ ಪ್ರಯತ್ನಿಸಿದರು.</verse>
				<verse number="16">ಆಗ ಆ ಊರಿನ ಬುದ್ಧಿವಂತೆಯಾದ ಒಬ್ಬ ಮಹಿಳೆ ಅವರಿಗೆ, “ಕೇಳಿ, ದಯವಿಟ್ಟು ಕೇಳಿ; ಯೋವಾಬನು ಮಾತಾಡುವುದಕ್ಕಾಗಿ ನನ್ನ ಬಳಿಗೆ ಬರಬೇಕೆಂದು ಹೇಳಿ,” ಎಂದು ಕೂಗಿದಳು. ಯೋವಾಬನು ಬಂದನು. ಆ ಸ್ತ್ರೀ,</verse>
				<verse number="17">“ನೀವು ಯೋವಾಬೋ?’ ಎಂದು ಅವನನ್ನು ಕೇಳಿದಳು. ಅವನು, “ಹೌದು, ನಾನೇ,” ಎಂದು ಉತ್ತರಕೊಟ್ಟನು. ಆಕೆ, “ನಿಮ್ಮ ದಾಸಿಯ ಮಾತನ್ನು ಕೇಳಿ,” ಎನ್ನಲು ಅವನು, “ಕೇಳುತ್ತೇನೆ,” ಎಂದನು.</verse>
				<verse number="18">ಆಗ ಆಕೆ, “ಪೂರ್ವಕಾಲದಲ್ಲಿ ಜನರು ಆಬೇಲಿನವರ ಆಲೋಚನೆಯನ್ನು ಕೇಳಿ, ಅದರ ಮೇರೆಗೆ ತೀರ್ಮಾನ ಮಾಡಿಕೊಳ್ಳುತ್ತಿದ್ದರು.</verse>
				<verse number="19">ನಮ್ಮ ಪಟ್ಟಣ, ಇಸ್ರಯೇಲರಲ್ಲಿ ಸಮಾಧಾನವುಳ್ಳದ್ದೂ ರಾಜನಿಷ್ಠೆಯುಳ್ಳದ್ದೂ ಆಗಿದೆ. ಇಸ್ರಯೇಲರ ಪಟ್ಟಣಗಳಲ್ಲಿ ತಾಯಿಯೆಂದು ಹೆಸರುಗೊಂಡ ಈ ಪಟ್ಟಣವನ್ನು ನೀವು ಹಾಳುಮಾಡಬೇಕೆಂದಿದ್ದೀರಿ. ನೀವು ಸರ್ವೇಶ್ವರನ ಸೊತ್ತನ್ನು ಕಬಳಿಸಬೇಡಿ,” ಎಂದಳು.</verse>
				<verse number="20">ಅದಕ್ಕೆ ಯೋವಾಬನು, “ಕಬಳಿಸುವುದಾಗಲಿ, ಹಾಳುಮಾಡುವುದಾಗಲಿ ನನ್ನಿಂದ ದೂರವಿರಲಿ; ಅಂಥದು ಬೇಡವೇ ಬೇಡ.</verse>
				<verse number="21">ನಾವು ಬಂದಿರುವ ಸಂಗತಿಯೇ ಬೇರೆ; ಎಫ್ರಯಿಮ್ ಪರ್ವತ ಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬವನು ಅರಸ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನನ್ನು ಒಪ್ಪಿಸಿಬಿಡಿ; ನಾನು ಊರನ್ನು ಬಿಟ್ಟು ಹೋಗುತ್ತೇನೆ,” ಎಂದು ಹೇಳಿದನು. ಅದಕ್ಕೆ ಆ ಸ್ತ್ರೀ, “ನೋಡಿ, ಈಗಲೇ ಅವನ ತಲೆಯನ್ನು ಗೋಡೆಯ ಕಿಂಡಿಯಿಂದ ನಿಮ್ಮ ಕಡೆಗೆ ಎಸೆಯಲಾಗುವುದು,” ಎಂದು ಉತ್ತರಕೊಟ್ಟು ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದಿಂದ ಈ ಸಂಗತಿಯನ್ನು ತಿಳಿಸಿದಳು.</verse>
				<verse number="22">ಅವರು ಬಿಕ್ರೀಯ ಮಗ ಶೆಬನ ತಲೆಯನ್ನು ಕಡಿದು ಯೋವಾಬನಿದ್ದಲ್ಲಿಗೆ ಬಿಸಾಡಿದರು. ಕೂಡಲೆ ಅವನು ಕಹಳೆಯನ್ನು ಊದಿಸಿದನು. ಅವನ ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಜೆರುಸಲೇಮಿನಲ್ಲಿದ್ದ ಅರಸನ ಬಳಿಗೆ ಬಂದನು.</verse>
				<verse number="23">ಯೋವಾಬನು ಇಸ್ರಯೇಲರ ಮುಖ್ಯಸೇನಾಪತಿ. ಯೆಹೋಯಾದಾವನ ಮಗ ಬೆನಾಯಾಯನು ‘ಕೆರೇತ್ಯ’ ಹಾಗು ‘ಪೆಲೇತ್ಯ’ ಎಂಬ ಕಾವಲುದಂಡುಗಳ ಅಧಿಪತಿ.</verse>
				<verse number="24">ಅದೋರಾಮನು ಬಿಟ್ಟೀಕೆಲಸ ಮಾಡಿಸುವವನು, ಅಹೀಲೂದನ ಮಗ ಯೆಹೋಷಾಪಾಟನು ಮುಖ್ಯ ಲೇಖಕ.</verse>
				<verse number="25">ಶೆವನು ಕಾರ್ಯದರ್ಶಿ, ಚಾದೋಕ್ ಹಾಗು ಎಬ್ಯಾತಾರರು ಯಾಜಕರು;</verse>
				<verse number="26">ಯಾಯೀರಿನವನಾದ ಈರನೂ ದಾವೀದನ ಯಾಜಕನು.</verse>
			</chapter>
			<chapter number="21">
				<verse number="1">ದಾವೀದನ ಕಾಲದಲ್ಲಿ ಮೂರು ವರ್ಷಗಳವರೆಗೂ ಬಿಡದೆ ಬರವಿತ್ತು. ದಾವೀದನು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದಾಗ, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೂ ಅವನ ಮನೆಯವರ ಮೇಲೂ ರಕ್ತಾಪರಾಧ ಇರುತ್ತದೆ,” ಎಂಬ ಉತ್ತರ ದೊರಕಿತು.</verse>
				<verse number="2">(ಗಿಬ್ಯೋನ್ಯರು ಇಸ್ರಯೇಲ್ ಕುಲಗಳಿಗೆ ಸೇರಿದವರಲ್ಲ; ಅವರು ಅಳಿಯದೆ ಉಳಿದ ಅಮೋರಿಯರಷ್ಟೇ). ಇಸ್ರಯೇಲರು ತಾವು ಇವರನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡಿ ಇದ್ದರು. ಆದರೂ ಸೌಲನು ಇಸ್ರಯೇಲ್ ಮತ್ತು ಯೆಹೂದ ಕುಲಗಳ ಮೇಲೆ ತನಗಿದ್ದ ಅಭಿಮಾನದ ನಿಮಿತ್ತ ಇವರನ್ನೂ ನಿರ್ನಾಮಗೊಳಿಸಬೇಕೆಂದಿದ್ದನು.</verse>
				<verse number="3">ಆಗ ಅರಸ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮ್ಮ ಪರವಾಗಿ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಕೊಟ್ಟರೆ ನೀವು ಸರ್ವೇಶ್ವರನ ಪ್ರಜೆಯನ್ನು ಆಶೀರ್ವದಿಸುವಿರಿ?” ಎಂದು ಕೇಳಿದನು.</verse>
				<verse number="4">ಅದಕ್ಕೆ ಅವರು, “ಸೌಲನ ಸಂತಾನದವರಿಗೂ ನಮಗೂ ಇರುವ ವ್ಯಾಜ್ಯ ಬೆಳ್ಳಿಬಂಗಾರದಿಂದ ತೀರಲಾರದು; ಇಸ್ರಯೇಲರನ್ನು ಕೊಲ್ಲುವ ಅಧಿಕಾರ ನಮಗಿಲ್ಲ,” ಎಂದು ಉತ್ತರಕೊಟ್ಟರು. ಅರಸನು ಅವರಿಗೆ, “ಏನು ಮಾಡಬೇಕು ಹೇಳಿ; ಮಾಡುತ್ತೇನೆ,” ಎಂದನು.</verse>
				<verse number="5">ಅವರು, “ನಮ್ಮನ್ನು ಇಸ್ರಯೇಲ್ ಪ್ರಾಂತ್ಯಗಳಿಂದ ಹೊರಡಿಸುವುದಕ್ಕೂ ನಿರ್ನಾಮಗೊಳಿಸುವುದಕ್ಕೂ ಪ್ರಯತ್ನಿಸಿದ ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸಿ.</verse>
				<verse number="6">ಸರ್ವೇಶ್ವರನಿಂದ ಆಯ್ಕೆಯಾದ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕುತ್ತೇವೆ,” ಎಂದರು. ಅರಸನು, “ಆಗಲಿ, ಒಪ್ಪಿಸುತ್ತೇನೆ,” ಎಂದನು.</verse>
				<verse number="7">ದಾವೀದನು ತಾನು ಸೌಲನ ಮಗ ಯೋನಾತಾನನಿಗೆ ಸರ್ವೇಶ್ವರನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನೆದು, ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.</verse>
				<verse number="8">ಆದರೆ ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳಲ್ಲಿ ಹುಟ್ಟಿದ ಅರ್ಮೋನೀ, ಮೆಫೀಬೋಶೆತ್ ಎಂಬ ಇಬ್ಬರು ಮಕ್ಕಳನ್ನೂ, ಮೆಹೋಲದ ಬರ್ಜಿಲ್ಲೈಯ ಮಗನಾದ ಅದ್ರೀಯೇಲನಿಗೆ ಸೌಲನ ಮಗಳಾದ ಮೇರಬಳಲ್ಲಿ ಹುಟ್ಟಿದ ಐದು ಮಂದಿ ಮಕ್ಕಳನ್ನೂ ತೆಗೆದುಕೊಂಡು ಅವರನ್ನು ಗಿಬ್ಯೋನ್ಯರಿಗೆ ಒಪ್ಪಿಸಿದನು.</verse>
				<verse number="9">ಅವರು ಇವರನ್ನು ಕೊಂದು ಗುಡ್ಡದ ಮೇಲೆ ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕಿದರು. ಈ ಏಳುಮಂದಿ ಏಕಕಾಲದಲ್ಲಿ ಹತರಾದರು. ಇವರನ್ನು ಕೊಂದಾಗ ಜವೆಗೋದಿ ಸುಗ್ಗಿಯು ಆರಂಭ ಆಗಿತ್ತು.</verse>
				<verse number="10">ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು ಅದನ್ನು ಬಂಡೆಯ ಮೇಲೆ ಹಾಸಿ ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಆ ಗೋಣಿತಟ್ಟಿನ ಮೇಲೆ ಕುಳಿತುಕೊಂಡು ಹಗಲಿನಲ್ಲಿ ಆಕಾಶದ ಪಕ್ಷಿಗಳಾಗಲಿ ಇರುಳಿನಲ್ಲಿ ಕಾಡುಮೃಗಗಳಾಗಲಿ ಆ ಶವಗಳನ್ನು ತಿನ್ನದಂತೆ ಕಾಯುತ್ತಿದ್ದಳು.</verse>
				<verse number="11">ಅಯ್ಯಾಹನ ಮಗಳೂ ಸೌಲನ ಉಪಪತ್ನಿಯೂ ಆದ ರಿಚ್ಪಳು ಮಾಡಿದ ಈ ಕಾರ್ಯವನ್ನು ದಾವೀದನಿಗೆ ತಿಳಿಸಲಾಯಿತು.</verse>
				<verse number="12">ಆಗ ಅವನು ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕಾಗಿ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಸೌಲನನ್ನು ಗಿಲ್ಬೋವದಲ್ಲಿ ಸೋಲಿಸಿದ ನಂತರ ಅವನ ಮತ್ತು ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ತೂಗುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಅವುಗಳನ್ನು ಕದ್ದುಕೊಂಡು ಹೋಗಿದ್ದರು.</verse>
				<verse number="13">ದಾವೀದನು ಯಾಬೇಷಿನಲ್ಲಿದ್ದ ಸೌಲ ಹಾಗು ಯೋನಾತಾನರ ಎಲುಬುಗಳನ್ನೂ ಗಿಬ್ಯೋನಿನಲ್ಲಿ ಹತರಾದ ಈ ಮನುಷ್ಯರ ಎಲುಬುಗಳನ್ನೂ ತೆಗೆದುಕೊಂಡು</verse>
				<verse number="14">ಅವುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದನಂತರ ನಾಡಿನ ಮೇಲೆ ದೇವರಿಗಿದ್ದ ಕೋಪ ಶಮನವಾಯಿತು.</verse>
				<verse number="15">ಒಂದು ಕಾಲದಲ್ಲಿ ಫಿಲಿಷ್ಟಿಯರಿಗೂ ಇಸ್ರಯೇಲರಿಗೂ ಮತ್ತೆ ಯುದ್ಧ ನಡೆಯಿತು. ದಾವೀದನು ತನ್ನ ಸೈನಿಕರನ್ನು ಕರೆದುಕೊಂಡು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೋದಾಗ ಬಹಳವಾಗಿ ದಣಿದಿದ್ದನು.</verse>
				<verse number="16">ಅವನನ್ನು ರೆಫಾಯರಲ್ಲೊಬ್ಬನಾದ ಇಷ್ಬೀಬೆನೋಬ್ ಎಂಬವನು ಕೊಲ್ಲುವುದಕ್ಕಿದ್ದನು. ಅವನ ಭರ್ಜಿಯ ತಾಮ್ರ ಮುನ್ನೂರು ಬೆಳ್ಳಿ ನಾಣ್ಯದ ತೂಕದ್ದು; ಅವನು ಸೊಂಟಕ್ಕೆ ಒಂದು ಹೊಸ ಕತ್ತಿಯನ್ನು ಕಟ್ಟಿಕೊಂಡಿದ್ದನು.</verse>
				<verse number="17">ಚೆರೂಯಳ ಮಗನಾದ ಅಬೀಷೈಯು ದಾವೀದನ ಸಹಾಯಕ್ಕೆ ಬಂದು ಫಿಲಿಷ್ಟಿಯನನ್ನು ಕೊಂದುಹಾಕಿದನು. ಆಗ ಜನರು ದಾವೀದನಿಗೆ, “ಇಸ್ರಯೇಲರ ಆಶಾಜ್ಯೋತಿ ಆರಿಹೋಗದಂತೆ ನೀನು ಇನ್ನು ಮುಂದೆ ನಮ್ಮ ಜೊತೆಯಲ್ಲಿ ಯುದ್ಧಕ್ಕೆ ಬರಬಾರದು,” ಎಂದು ಖಂಡಿತವಾಗಿ ಹೇಳಿದರು.</verse>
				<verse number="18">ಅನಂತರ ಫಿಲಿಷ್ಟಿಯರ ಸಂಗಡ ಗೋಬಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕ್ಕೆ ಎಂಬವನು ರೆಫಾಯನಾದ ಸಫ್ ಎಂಬವನನ್ನು ಕೊಂದನು.</verse>
				<verse number="19">ಗೋಬಿನಲ್ಲಿ ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಬೆತ್ಲೆಹೇಮಿನವನಾದ ಯಾರೇಯೋ ರೆಗೀಮ್ ಎಂಬವನ ಮಗ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನನ್ನು ಕೊಂದನು. ಆ ಗೊಲ್ಯಾತನ ಭರ್ಜಿಯ ಹಿಡಿಕೆ ನೇಯಿಗಾರರ ಕುಂಟೆಯಷ್ಟು ಗಾತ್ರ ಇತ್ತು.</verse>
				<verse number="20">ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ - ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನೂ ರೆಫಾಯನು.</verse>
				<verse number="21">ಅವನು ಇಸ್ರಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮೆಯಾನನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.</verse>
				<verse number="22">ಗತ್ ಊರಿನವರಾದ ಈ ನಾಲ್ಕು ಮಂದಿ ರೆಫಾಯರು ದಾವೀದನಿಂದಲೂ ಅವನ ಸೇವಕರಿಂದಲೂ ಹತರಾದರು.</verse>
			</chapter>
			<chapter number="22">
				<verse number="1">ಸರ್ವೇಶ್ವರಸ್ವಾಮಿ ದಾವೀದನನ್ನು ಸೌಲನ ಕೈಗೂ ಇತರ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿದರು. ಈ ಕಾರಣ ಅವನು ಸರ್ವೇಶ್ವರಸ್ವಾಮಿಯನ್ನು ಕೀರ್ತಿಸುತ್ತಾ ಈ ಜಯಗೀತೆಯನ್ನು ಹಾಡಿದನು:</verse>
				<verse number="2">ಸರ್ವೇಶ್ವರನೇ ನನಗೆ ಪೊರೆಬಂಡೆ, ನನ್ನ ಕಲ್ಲು ಕೋಟೆ, ಆತನೇ ವಿಮೋಚಕ ನನಗೆ</verse>
				<verse number="3">ಆತನೇ ನನಗೆ ದೇವರು, ನನ್ನಾಶ್ರಯಗಿರಿ, ನನ್ನ ರಕ್ಷಣಾಶೃಂಗ, ನನ್ನ ದುರ್ಗ, ನನ್ನ ಗುರಾಣಿ.</verse>
				<verse number="4">ಸರ್ವೇಶ್ವರನು ಸ್ತುತ್ಯಾರ್ಹನು ಶತ್ರುಗಳಿಂದ ಕಾಪಾಡುವನು, ನಾನವಗೆ ಮೊರೆಯಿಡಲು</verse>
				<verse number="5">ಕುತ್ತಿಗೆಗೆ ಬಂದಿದ್ದವು ಸಾವಿನ ಅಲೆಗಳು ನಡುಕ ಹುಟ್ಟಿಸಿದ್ದವು ವಿನಾಶಪ್ರವಾಹಗಳು.</verse>
				<verse number="6">ಸುತ್ತಿಕೊಂಡಿದ್ದವು ಪಾತಾಳಪಾಶಗಳು ನನ್ನ ಕಣ್ಮುಂದಿದ್ದವು ಮರಣಕರ ಉರುಲುಗಳು.</verse>
				<verse number="7">ಇಂಥಾ ದುಸ್ಥಿತಿಯಲಿ ನಾ ಮೊರೆಯಿಟ್ಟೆ ದೇವನಿಗೆ ಪ್ರಾರ್ಥನೆ ಮಾಡಿದೆ ಆ ಸರ್ವೇಶ್ವರನಿಗೆ. ನನ್ನ ಕೂಗು ಕೇಳಿಸಿತು ಆತನ ಮಂದಿರದಲಿ ನನ್ನ ಪ್ರಾರ್ಥನೆ ಬಿದ್ದಿತು ಆತನ ಕಿವಿಯಲಿ.</verse>
				<verse number="8">ಆಗ ಕಂಪಿಸಿತು ಭೂಮಿ ಗಡಗಡನೆ ಕದಲಿದವು ಆಗಸದಸ್ತಿವಾರಗಳು ಮಿಲಮಿಲನೆ ಏಕೆನೆ ಸಿಟ್ಟೇರಿತ್ತು ಆತನಿಗೆ.</verse>
				<verse number="9">ಹೊರಬಂದಿತು ಹೊಗೆ ಆತನ ಮೂಗಿನಿಂದ ಹೊರಟಿತು ಅಗ್ನಿಜ್ವಾಲೆ ಆತನ ಬಾಯಿಂದ ಕಾದುಕೆಂಡವಾಯಿತು ಅದಕ್ಕೆದುರಿಗೆ ಸಿಕ್ಕಿದುದೆಲ್ಲ.</verse>
				<verse number="10">ಆಕಾಶವನೆ ಬಾಗಿಸಿ ಆತನಿಳಿದು ಬರಲು ಸೇರಿತು ಆತನ ಕಾಲಡಿ ಕಾರ್ಮುಗಿಲು.</verse>
				<verse number="11">ಬಂದಿಳಿದನು ‘ಕೆರೂಬಿ’ ವಾಹನಾರೂಢನಾಗಿ ಕಾಣಿಸಿಕೊಂಡನು ವಾಯುರೆಕ್ಕೆಗಳ ವೇಗದಲಿ.</verse>
				<verse number="12">ಕತ್ತಲನು, ಜಲಮಯ ಮೇಘಗಳನು ಸುತ್ತಲು ಕವಿಸಿಕೊಂಡನು ಛತ್ರಾಂಬರದೊಳು.</verse>
				<verse number="13">ಉರಿಗೆಂಡಗಳು ಹೊರಟುಬರುತ್ತಿದ್ದವು ಅಷ್ಟು ಪ್ರಜ್ವಲವಾಗಿತ್ತು ಆತನ ಸಾನ್ನಿಧ್ಯವು.</verse>
				<verse number="14">ಗುಡುಗಿದನು ಸರ್ವೇಶ್ವರ ಗಗನಮಂಡಲದಿಂದ ಮೊಳಗಿತು ವಾಣಿ ಆ ಪರಮೋನ್ನತನಿಂದ.</verse>
				<verse number="15">ಚದರಿಸಿದನು ಶತ್ರುಗಳನು ಬಾಣಗಳನೆಸೆದು ತಳಮಳಗೊಳಿಸಿದನವರನು ಸಿಡಿಲನು ಹೊಡೆದು.</verse>
				<verse number="16">ಆತನಾ ಗದರಿಕೆಗೆ, ಆತನಾ ಶ್ವಾಸಭರಕ್ಕೆ ಕಾಣಿಸಿಕೊಂಡಿತು ಇಂಗಿಹೋದ ಸಮುದ್ರದ ತಳ ತೋರಿಬಂದಿತು ಭೂಲೋಕದ ಅಸ್ತಿವಾರ.</verse>
				<verse number="17">ಮೇಲಣಾಲೋಕದಿಂದ ಹಿಡಿದುಕೊಂಡ ಎನ್ನನು ಕೈಚಾಚಿ ಸೆಳೆದುಕೊಂಡ ಆ ಜಲರಾಶಿಗಳಿಂದೆನ್ನನು ಕೈನೀಡಿ.</verse>
				<verse number="18">ನನ್ನ ಬಿಡಿಸಿ ರಕ್ಷಿಸಿದನು ಶತ್ರುಗಳಿಂದ ನನಗಿಂತ ಪುಷ್ಟ, ಬಲಿಷ್ಠ ಹಗೆಗಳಿಂದ.</verse>
				<verse number="19">ನನ್ನ ಮೇಲೆರಗಿದ್ದರಾ ಹಗೆಗಳು ದುರಂತ ಕಾಲದಲಿ ನನಗುದ್ಧಾರಕನಾದ ಸರ್ವೇಶ್ವರನು, ಆ ವಿಪತ್ಕಾಲದಲಿ.</verse>
				<verse number="20">ಬಿಕ್ಕಟ್ಟಿನಿಂದ ಬಿಡಿಸಿ ತಂದನು ಬಯಲಿಗೆ ಅಕ್ಕರೆಯಿಂದ ಮೆಚ್ಚಿ ನನಗಾದನು ರಕ್ಷೆ.</verse>
				<verse number="21">ನನಗೊಳಿತು ಮಾಡಿದನಾತ ಸನ್ನಡತೆಗೆ ತಕ್ಕಂತೆ ಪ್ರತಿಫಲವನಿತ್ತನು ನನ್ನ ಹಸ್ತಶುದ್ಧತೆಗೆ ತಕ್ಕ ಹಾಗೆ.</verse>
				<verse number="22">ದೇವರನು ತೊರೆದು ದುರುಳನಾಗದೆ ನಾನನುಸರಿಸಿದೆ ಸರ್ವೇಶ್ವರನ ಮಾರ್ಗವನೆ.</verse>
				<verse number="23">ಆತನ ವಿಧಿನಿಯಮಗಳನ್ನು ಕೈಬಿಡದೆ ಆತನಾಜ್ಞೆಗಳನಿಟ್ಟೆ ಸದಾ ನನ್ನ ಕಣ್ಣ ಮುಂದೆ.</verse>
				<verse number="24">ಪಾಪದಲಿ ಬೀಳದೆ ನಡೆದೆ ಎಚ್ಚರಿಕೆಯಾಗಿ ಆತನ ದೃಷ್ಟಿಯಲಿದ್ದೆ ನಿರ್ದೋಷಿಯಾಗಿ.</verse>
				<verse number="25">ನಾ ನೀತಿವಂತ, ನಿರಪರಾಧಿಯೆಂದರಿತು ನನಗಿತ್ತನಾ ಸರ್ವೇಶ್ವರ ತಕ್ಕ ಪ್ರತಿಫಲವನು.</verse>
				<verse number="26">ಕರುಣೆಯುಳ್ಳವನಿಗಾತ ಕರುಣಾಮಯಿ ದೋಷರಹಿತನಿಗಾತ ನಿರ್ದೋಷಿ.</verse>
				<verse number="27">ಶುದ್ಧನಿಗಾತ ಪರಿಶುದ್ಧನು ಮೂರ್ಖನಿಗಾತ ಮಹಾವಕ್ರನು.</verse>
				<verse number="28">ದೀನದಲಿತರನು ಉದ್ಧರಿಸುವನು ಗರ್ವಿಗಳನು ಗುರುತಿಸಿ ತಗ್ಗಿಸುವನು.</verse>
				<verse number="29">ಹೇ ಸರ್ವೇಶ್ವರಾ, ನೀನೆನಗೆ ಜ್ಯೋತಿ ಕತ್ತಲನು ನೀಗಿಸಿ, ಬೆಳಕನು ನೀಡುತಿ.</verse>
				<verse number="30">ನಿನ್ನ ಶಕ್ತಿಯಿದ್ದಲ್ಲಿ ನಾ ದಂಡಿನ ಮೇಲೆ ಬೀಳಬಲ್ಲೆ ದೈವನೆರವಿದ್ದಲ್ಲಿ ನಾ ಕೋಟೆಕೊತ್ತಲನೆ ಹಾರಬಲ್ಲೆ.</verse>
				<verse number="31">ದೇವರ ಮಾರ್ಗ ದೋಷರಹಿತ ಸರ್ವೇಶ್ವರನ ವಚನ ಪರಮಪುನೀತ ಆಶ್ರಿತರೆಲ್ಲರಿಗಾತ ರಕ್ಷಣಾಕವಚ.</verse>
				<verse number="32">ಸರ್ವೇಶ್ವರನಲ್ಲದೆ ಇನ್ನಾವ ದೇವರುಂಟು? ನಮ್ಮ ದೇವನಲ್ಲದೆ ಉದ್ಧಾರಕನೆಲ್ಲುಂಟು?</verse>
				<verse number="33">ದೇವನೇ ನನಗೆ ಭದ್ರವಾದ ದುರ್ಗ ಆತನಿಂದಲೇ ಸರಾಗ ನನ್ನ ಮಾರ್ಗ.</verse>
				<verse number="34">ನನಗಿತ್ತನಾತ ಹುಲ್ಲೆಯಂಥ ಮೊನೆಗಾಲು ಎನ್ನ ಬಿಗಿನಿಲ್ಲಿಸಿದ ಮಲೆಗಳ ಮೇಲೂ.</verse>
				<verse number="35">ಯುದ್ಧವಿದ್ಯೆಯ ಕಲಿತೆ ಆತನಿಂದಲೆ ಎಂದೇ ನಾ ಕಂಚಿನ ಬಿಲ್ಲನೆ ಬಗ್ಗಿಸಬಲ್ಲೆ.</verse>
				<verse number="36">ನನ್ನ ಪರ ನೀನೇ ಗುರಾಣಿ ಹಿಡಿದು ರಕ್ಷಿಸಿದೆ ನಿನ್ನ ಕೃಪಾವರ ತಂದಿತು ನನಗೆ ದೊಡ್ಡಸ್ತಿಕೆ.</verse>
				<verse number="37">ನೀನಿತ್ತೆ ನನ್ನ ಪಾದಗಳಿಗೆ ವಿಶಾಲಸ್ಥಳ ನನ್ನ ಹೆಜ್ಜೆಗಳು ಕದಲವು ಈ ನಿಮಿತ್ತ.</verse>
				<verse number="38">ಸದೆಬಡಿವೆನು ಶತ್ರುಗಳನು ಬೆನ್ನಟ್ಟಿ ಅವರನು ನಿರ್ಮೂಲ ಮಾಡದೆ ಬರೆ ಹಿಂದಿರುಗಿ.</verse>
				<verse number="39">ಅವರನು ಹೊಡೆದೆ ಮತ್ತೆ ಏಳದಂತೆ ಅವರನು ಮಾಡಿದೆ ಕಾಲಿಗೆ ಬೀಳುವಂತೆ.</verse>
				<verse number="40">ನನಗಿತ್ತೆ ನೀ ಕದನಕ್ಕಾಗುವ ಶೌರ್ಯವೆಂಬ ನಡುಕಟ್ಟು ತಗ್ಗಿಸಿದೆ ಎದುರಾಳಿಗಳ ನನಗಧೀನ ಮಾಡಿಬಿಟ್ಟು.</verse>
				<verse number="41">ಆ ಶತ್ರುಗಳೋಡಿದರು ನನಗೆ ಬೆಂಗೊಟ್ಟು ಆ ಹಗೆಗಳನು ನಿರ್ಮೂಲಮಾಡಿದೆ ನಾ ಗುರಿಯಿಟ್ಟು.</verse>
				<verse number="42">ಎಲ್ಲಿ ಯಾಚಿಸಿದರೂ ಅವರಿಗಿರಲಿಲ್ಲ ರಕ್ಷಕ ಸರ್ವೇಶ್ವರನಿಗೆ ಮೊರೆಯಿಟ್ಟರೂ ಅವರಿಗೆ ದೊರಕಲಿಲ್ಲ ಉತ್ತರ.</verse>
				<verse number="43">ಪುಡಿಪುಡಿ ಮಾಡಿದೆ ನಾನವರನು ಮಣ್ಣಿನ ಹೆಂಟೆಯಂತೆ ಎತ್ತೆಸೆದುಬಿಟ್ಟೆ ನಾನವರನು ಮೋರಿಯ ಕೆಸರಿನಂತೆ.</verse>
				<verse number="44">ನನ್ನ ಜನರ ಒಳಕಲಹದಿಂದೆನ್ನ ನೀ ತಪ್ಪಿಸಿದೆ ನನ್ನನುಳಿಸಿ ಜನಾಂಗಗಳಿಗೆ ಜನಪನಾಗಿಸಿದೆ ನಾನರಿಯದ ಜನರನ್ನೂ ನನಗಧೀನರನ್ನಾಗಿಸಿದೆ.</verse>
				<verse number="45">ದೇಶಾಂತರದವರೂ ಮುದುರಿಕೊಂಡರು ನನ್ನ ಮುಂದೆ ವಿಧೇಯರಾದರೆನಗೆ ನನ್ನ ಸುದ್ದಿ ಕೇಳಿದ ಮಾತ್ರಕೆ.</verse>
				<verse number="46">ಎದೆಗುಂದಿದವರಾದರು ಆ ವಿದೇಶಿಯರು ತಮ್ಮ ಕೋಟೆಯಿಂದ ನಡುಗುತ್ತಾ ಹೊರಬಂದರು.</verse>
				<verse number="47">ಸರ್ವೇಶ್ವರನು ಚೈತನ್ಯಸ್ವರೂಪನು ನನ್ನುದ್ಧಾರಕನವಗೆ ಸ್ತುತಿಸ್ತೋತ್ರವು ನನ್ನಾಶ್ರಯಸಿರಿ ದೇವಗೆ ಜಯಕಾರವು.</verse>
				<verse number="48">ನನ್ನ ಶತ್ರುಗಳಿಗೆ ವಿಧಿಸುವನಾ ದೇವ ಪ್ರತಿದಂಡನೆ ಜನಾಂಗಗಳನು ಅಧೀನಪಡಿಸುವನಾತ ನನಗೆ.</verse>
				<verse number="49">ಶತ್ರುಗಳಿಂದ ನೀನೆನ್ನ ಮುಕ್ತಗೊಳಿಸಿದೆ ಎದುರಾಳಿಗೆ ತಪ್ಪಿಸಿ ನನ್ನನುನ್ನತಿಗೇರಿಸಿದೆ ಹಿಂಸಾತ್ಮಕರಿಂದ ನೀಯೆನ್ನ ಸಂರಕ್ಷಿಸಿದೆ.</verse>
				<verse number="50">ಎಂತಲೆ, ನಿನ್ನ ಸ್ತುತಿಪೆನು ಅನ್ಯಜನಗಳ ಮಧ್ಯೆ ನಿನ್ನ ನಾಮವನು ಹೇ ಸರ್ವೇಶ್ವರಾ ಸಂಕೀರ್ತಿಪೆ.</verse>
				<verse number="51">ತಾನೇ ನೇಮಿಸಿದ ಅರಸನಿಗೆ ಆತನೀವನು ವಿಶೇಷ ರಕ್ಷಣೆ.</verse>
				<verse number="52">ಅನುಗ್ರಹಿಸುವನಾತ ಅನಂತಾನಂತ ಕೃಪೆ ತಾನಭಿಷೇಕಿಸಿದ ದಾವೀದನಿಗೆ, ಆತನ ಸಂತತಿಗೆ.</verse>
			</chapter>
			<chapter number="23">
				<verse number="1">ದಾವೀದನ ಕಡೇ ಮಾತುಗಳಿವು: ಜೆಸ್ಸೆಯನ ಮಗ ದಾವೀದನ ನುಡಿಗಳಿವು: ಉನ್ನತಸ್ಥಾನವನ್ನು ಅಲಂಕರಿಸಿದವನು, ಯಕೋಬ ದೇವರಿಂದ ಅಭಿಷಿಕ್ತನಾದವನು, ಇಸ್ರಯೇಲರ ವರಕವಿ ಆಡಿದ ವಚನಗಳಿವು:</verse>
				<verse number="2">ನನ್ನೊಳು ಉಸಿರಾಡಿತು ಸರ್ವೇಶ್ವರನಾತ್ಮ ನನ್ನ ಬಾಯೊಳಿತ್ತು ಆತನ ವಾಕ್ಯ.</verse>
				<verse number="3">ಇಸ್ರಯೇಲರ ದೇವನು, ಅವರಾಶಕ್ತನು, ಹೀಗೆಂದು ನನಗೆ ನುಡಿದನು</verse>
				<verse number="4">ದೇವರಲ್ಲಿ ಭಯಭಕ್ತಿಯುಳ್ಳ ರಾಜನು ನೀತಿಯಿಂದ ಪ್ರಜೆಗಳನಾಳುವಾತನು ಉದಯಕಾಲದ ಸೂರ್ಯನಿಗೆ ಸಮಾನನು ಏರುವನಾತ ಮೇಘರಹಿತ ಪ್ರಾತಃಕಾಲದೊಳು ತೇಜೋಮಯನಾಗಿ ಮೊಳೆಯಿಸುವನು ಪಚ್ಚೆಪಸಿರನು ಮಳೆ ತೋಯ್ದ ನೆಲದೊಳು ಹುಲುಸಾಗಿ.</verse>
				<verse number="5">ಹೌದು, ಸರ್ವೇಶ್ವರನ ಸನ್ನಿಧಿಯಲಿ ನನ್ನ ಮನೆತನ ಸುಸ್ಥಿರ ಆತನೊಂದಿಗೆ ನಾ ಮಾಡಿಲ್ಲವೆ ಚಿರವಾದ ಒಪ್ಪಂದ? ಅದೆಲ್ಲದರಲು ಸುವ್ಯವಸ್ಥಿತ, ಅದೆಂದಿಗೂ ನಿರ್ಭೀತ. ಆತನೇ ನನ್ನುದ್ಧಾರಕ್ಕೆ ಮೂಲಾಧಾರ ನನ್ನ ಆಶೆ ಆಕಾಂಕ್ಷೆಗಳ ಪೂರೈಸುವಾತ.</verse>
				<verse number="6">ದುರುಳರಾದರೊ ದೂರವೆಸೆದ ಕಾಡುಮುಳ್ಳುಗಳು ಮುಟ್ಟಲಾಗದು ಅವುಗಳನು ಬರಿಗೈಯಿಂದ,</verse>
				<verse number="7">ಬಳಸಬೇಕು ಕಬ್ಬಿಣದಾಯುಧವನು, ಮೊನೆ ಭರ್ಜಿಯನು, ಇಲ್ಲವೆ ಸುಡಬೇಕು ಇದ್ದಲ್ಲೇ ಬೆಂಕಿಯಿಂದ.</verse>
				<verse number="8">ದಾವೀದನ ರಣವೀರರ ಪಟ್ಟಿ: ತಹ್ಕೆಮೋನ್ಯನಾದ ಯೋಷೆಬಷ್ಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಎನ್ನಿಸಿಕೊಳ್ಳುವ ಇವನು ಒಮ್ಮೆಗೆ ಎಂಟುನೂರು ಮಂದಿಯನ್ನು ಕೊಂದನು.</verse>
				<verse number="9">ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗ ಎಲ್ಲಾಜಾರನು. ಫಿಲಿಷ್ಟಿಯರು ಅಲ್ಲಿ ಯುದ್ಧಕ್ಕೆ ಕೂಡಿಕೊಂಡಾಗ ಅವರನ್ನು ಪ್ರತಿಭಟಿಸಲು ದಾವೀದನ ಜೊತೆಯಲ್ಲಿ ಹೋದ ಮೂರು ಮಂದಿ ಶೂರರಲ್ಲಿ ಇವನೂ ಒಬ್ಬನಾಗಿದ್ದನು.</verse>
				<verse number="10">ಇಸ್ರಯೇಲರು ಹೋದನಂತರ ಇವನು ಅಲ್ಲೇ ನಿಂತು, ಕತ್ತಿ ಹಿಡಿದು ಕೈಸೋತು ಮರಗಟ್ಟಿಹೋಗುವ ತನಕ, ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನ ಸರ್ವೇಶ್ವರ ಮಹಾಜಯವನ್ನುಂಟುಮಾಡಲು ಇಸ್ರಯೇಲರು ಸುಲಿದುಕೊಳ್ಳುವುದಕ್ಕಾಗಿಯೇ, ಹಿಂದಿರುಗಿದ್ದರು.</verse>
				<verse number="11">ಮೂರನೆಯವನು ಹರಾರ್ಯನಾದ ಆಗೇಯನ ಮಗ ಶಮ್ಮ ಎಂಬವನು ಫಿಲಿಷ್ಟಿಯರು ದೊಡ್ಡ ಗುಂಪಾಗಿ ಒಂದು ಅಲಸಂದೆಯ ಹೊಲಕ್ಕೆ ಬಂದರು.</verse>
				<verse number="12">ಇಸ್ರಯೇಲರು ಅವರ ಎದುರಿನಿಂದ ಓಡಿಹೋದಾಗ ಇವನು ಆ ಹೊಲದ ಮಧ್ಯದಲ್ಲೇ ನಿಂತುಕೊಂಡು ಫಿಲಿಷ್ಟಿಯರನ್ನು ಕೊಂದು ಹೊಲವನ್ನು ಕಾಪಾಡಿದನು. ಹೀಗೆ ಸರ್ವೇಶ್ವರ ಮಹಾಜಯವನ್ನುಂಟುಮಾಡಿದರು.</verse>
				<verse number="13">ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ಮೂರು ಮಂದಿ, ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ, ಸುಗ್ಗೀಕಾಲದಲ್ಲಿ ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿಬಂದು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಾಗ</verse>
				<verse number="14">ದಾವೀದನು ಆ ಅದುಲ್ಲಾಮ್ ದುರ್ಗದಲ್ಲಿದ್ದನು. ಫಿಲಿಷ್ಟಿಯರು ಬೆತ್ಲೆಹೇಮಿನಲ್ಲಿ ಕಾವಲುದಂಡನ್ನಿಟ್ಟಿದ್ದರು.</verse>
				<verse number="15">ಅದೇ ಸಮಯದಲ್ಲಿ ದಾವೀದನು ಲವಲವಿಕೆಯಿಂದ, “ಬೆತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು,” ಎಂದನು</verse>
				<verse number="16">ಕೂಡಲೆ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿಹೋಗಿ ಬೆತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ ದಾವೀದನಿಗೆ ತಂದುಕೊಟ್ಟರು. ಆದರೆ ಅವನು ಅದನ್ನು ಕುಡಿಯಲು ಒಪ್ಪಲಿಲ್ಲ.</verse>
				<verse number="17">“ಸರ್ವೇಶ್ವರಾ, ಈ ನೀರನ್ನು ಕುಡಿಯುವುದು ನನಗೆ ದೂರವಾಗಿರಲಿ.ಇದು ಜೀವದಾಶೆ ತೊರೆದವರ ರಕ್ತ; ಇದನ್ನು ಕುಡಿಯುವುದೇ ಇಲ್ಲ,” ಎಂದು ಹೇಳಿ ಅದನ್ನು ಸರ್ವೇಶ್ವರನಿಗೆ ಸಮರ್ಪಣೆಯಾಗಿ ಹೊರಗೆ ಹೊಯ್ದುಬಿಟ್ಟನು. ಆ ಮೂರುಮಂದಿ ಪರಾಕ್ರಮಿಗಳ ಕೃತ್ಯಗಳಿವು.</verse>
				<verse number="18">ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಭರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಮಂದಿಯನ್ನು ಕೊಂದುದರಿಂದ ಈ ಮೂವರಲ್ಲಿ ಕೀರ್ತಿಗೊಂಡನು.</verse>
				<verse number="19">ಇವರಲ್ಲಿ ಘನತೆ ಗೌರವ ಪಡೆದ ನಾಯಕ ಇವನೇ. ಆದರೂ ಇವನು ಮೊದಲಿನ ಮೂರು ಮಂದಿಗೆ ಸಮಾನನಾಗಿರಲಿಲ್ಲ.</verse>
				<verse number="20">ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ನಡೆಸಿದ್ದನು. ಉದಾಹರಣೆಗೆ: ಒಮ್ಮೆ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಬ್ಬ ಹಿಮಕಾಲದಲ್ಲಿ ಸಿಂಹವೊಂದು ಗುಂಡಿಯಲ್ಲಿ ಬಿದ್ದಿತ್ತು. ಇವನು ಆ ಗುಂಡಿಗೆ ಇಳಿದುಹೋಗಿ ಅದನ್ನು ಕೊಂದನು.</verse>
				<verse number="21">ಮತ್ತೊಮ್ಮೆ ಬಲಿಷ್ಠನಾದ ಒಬ್ಬ ಈಜಿಪ್ಟಿನವನನ್ನು ಕೊಂದನು. ಆ ಈಜಿಪ್ಟಿನವನ ಕೈಯಲ್ಲಿ ಒಂದು ಭರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಭರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನೇ ಕೊಂದನು.</verse>
				<verse number="22">ಈ ಪರಾಕ್ರಮ ಕೃತ್ಯದಿಂದ ಯೆಹೋಯಾದಾವನ ಮಗನಾದ ಬೆನಾಯನು ಈ ಮೂವರಲ್ಲಿ ಹೆಸರುಗೊಂಡನು.</verse>
				<verse number="23">ಮೂವತ್ತು ಮಂದಿಯಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದ್ದರೂ ಮೊದಲಿನ ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ನೇಮಿಸಿದ್ದನು.</verse>
				<verse number="24">ಆ ಮೂವತ್ತು ಮಂದಿ ರಣವೀರರ ಪಟ್ಟಿ ಇದು: ಯೋವಾಬನ ತಮ್ಮನಾದ ಅಸಾಹೇಲನು, ಬೆತ್ಲೆಹೇಮಿನ ದೋದೋವಿನ ಮಗನಾದ ಎಲ್ಹಾನನು.</verse>
				<verse number="25">ಹರೋದಿನವರಾದ ಶಮ್ಮ ಎಲೀಕರು, ಪೆಲೆಟಿನವನಾದ ಹೆಲೆಚ್, ತೆಕೋವದ ಇಕ್ಕೇಷನ ಮಗನಾದ ಈರಾ, ಅಣತೋತಿನವನಾದ ಅಬೀಯೆಜೆರ್,</verse>
				<verse number="26"></verse>
				<verse number="27">ಹುಷಾ ಊರಿನವನಾದ ಮೆಬುನ್ನೈ,</verse>
				<verse number="28">ಅಹೋಹಿನವನಾದ ಚಲ್ಮೋನ್, ನೆಟೋಫದವನಾದ ಮಹರೈ,</verse>
				<verse number="29">ನೆಟೋಪದವನಾದ ಬಾಣನ ಮಗ ಹೇಲೆಬ್, ಬೆನ್ಯಾಮೀನ್ ನಾಡಿನ ಗಿಬೆಯ ಊರಿನ ರೀಬೈ ಎಂಬವನ ಮಗ ಇತ್ತೈ, ಪಿರಾತೋನ್ಯನಾದ ಬೆನಾಯ,</verse>
				<verse number="30">ನಹಲೇಗಾಷಿನವನಾದ ಹಿದ್ದೈ,</verse>
				<verse number="31">ಅರಾಬಾ ತಗ್ಗಿನವನಾದ ಅಬೀಅಲ್ಬೋನ್,</verse>
				<verse number="32">ಬಹುರಿಮ್ಯನಾದ ಅಜ್ಮಾವೇತ್, ಶಾಲ್ಬೋನ್ಯನಾದ ಎಲೆಯಖ್ಬಾ ಯಾಷೇನನ ಮಕ್ಕಳು, ಯೋನಾತಾನನು,</verse>
				<verse number="33">ಹರಾರ್ಯನಾದ ಶಮ್ಮ, ಹರಾರ್ಯನಾದ ಶಾರಾರನ ಮಗ ಅಹೀಯಾಮ್,</verse>
				<verse number="34">ಮಾಕಾ ಊರಿನ ಅಹಸ್ಬೈ ಎಂಬುವನ ಮಗ ಎಲೀಫೆಲೆಟ್, ಗಿಲೋವಿನ ಅಹೀತೋಫೆಲ್ ಎಂಬವನ ಮಗ ಎಲೀಯಾಮ್,</verse>
				<verse number="35">ಕರ್ಮೆಲ್ಯನಾದ ಹೆಚ್ರೋ, ಅರ್ಬೀಯನಾದ ಪಾರೈ,</verse>
				<verse number="36">ಚೋಬ ಊರಿನ ನಾತಾನ್ ಎಂಬವನ ಮಗ ಇಗಾಲ್, ಗಾದ್ಯನಾದ ಬಾನೀ,</verse>
				<verse number="37">ಅಮ್ಮೋನಿಯನಾದ ಚೆಲೆಕ್, ಬೇರೋತ್ಯನೂ ಚೆರೂಯಳ ಮಗ ಯೋವಾಬನ ಆಯುಧವಾಹಕನೂ ಆಗಿದ್ದ ನಹರೈ,</verse>
				<verse number="38">ಇತ್ರೀಯರಾದ ಈರಾ ಗಾರೇಬರು, ಹಿತ್ತಿಯನಾದ ಊರೀಯ,</verse>
				<verse number="39">ಹೀಗೆ ಒಟ್ಟಿಗೆ ಮೂವತ್ತೇಳು ಮಂದಿ ರಣಧೀರರಿದ್ದರು.</verse>
			</chapter>
			<chapter number="24">
				<verse number="1">ಸರ್ವೇಶ್ವರಸ್ವಾಮಿ ಮತ್ತೆ ಇಸ್ರಯೇಲರ ಮೇಲೆ ಕೋಪಗೊಂಡರು. ಇಸ್ರಯೇಲ್ ಹಾಗು ಯೆಹೂದ್ಯಕುಲಗಳವರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದರು.</verse>
				<verse number="2">ಅರಸನು ತನ್ನ ಹತ್ತಿರದಲ್ಲಿದ್ದ ಸೇನಾಪತಿಯಾದ ಯೋವಾಬನಿಗೆ, “ಜನಸಂಖ್ಯೆ ಗೊತ್ತಾಗುವ ಹಾಗೆ ನೀನು ದಾನ್ ಊರಿನಿಂದ ಬೇರ್ಷೆಬದವರೆಗೆ ಸಂಚರಿಸಿ ಇಸ್ರಯೇಲ್ ಕುಲಗಳ ಎಲ್ಲ ಜನರನ್ನು ಲೆಕ್ಕಮಾಡಿಕೊಂಡು ಬಾ,” ಎಂದು ಆಜ್ಞಾಪಿಸಿದನು.</verse>
				<verse number="3">ಆಗ ಯೋವಾಬನು, “ನನ್ನ ಒಡೆಯರಾದ ತಮ್ಮ ಆಯುಷ್ಕಾಲದಲ್ಲೇ ದೇವರಾದ ಸರ್ವೇಶ್ವರ ತಮ್ಮ ಪ್ರಜೆಯನ್ನು ಈಗ ಇರುವುದಕ್ಕಿಂತ ನೂರರಷ್ಟು ಹೆಚ್ಚಿಸಲಿ. ನನ್ನ ಒಡೆಯರಾದ ಅರಸರು ಈ ಕಾರ್ಯಕ್ಕೆ ಮನಸ್ಸುಮಾಡಿದ್ದೇಕೆ?” ಎಂದನು.</verse>
				<verse number="4">ಆದರೆ ಅರಸನು ಯೋವಾಬನಿಗೂ ಇತರ ಸೇನಾಪತಿಗಳಿಗೂ ಕಿವಿಗೊಡದೆ, ತನ್ನ ಮಾತನ್ನೇ ಸಾಧಿಸಿದ್ದರಿಂದ, ಅವರು ಇಸ್ರಯೇಲರನ್ನು ಲೆಕ್ಕಿಸುವುದಕ್ಕಾಗಿ ಅರಸನ ಸನ್ನಿಧಿಯಿಂದ ಹೊರಟುಹೋದರು.</verse>
				<verse number="5">ಅವರು ಜೋರ್ಡನ್ ನದಿಯನ್ನು ದಾಟಿ ಗಾದ್ ತಗ್ಗಿನಲ್ಲಿರುವ ಪಟ್ಟಣದ ಬಲಪಾರ್ಶ್ವದಲ್ಲಿರುವ ಅರೋಯೇರಿನಿಂದ ತೊಡಗಿ,</verse>
				<verse number="6">ಯಗ್ಜೇರಿಗೂ ಅಲ್ಲಿಂದ ಗಿಲ್ಯಾದ್ ಪ್ರಾಂತ್ಯ, ತಖ್ತೀಮ್ ಹೊಜೀಪ್ರದೇಶ ಇವುಗಳ ಮೇಲೆ ಯಾನಿನ ದಾನ್ ಎಂಬಲ್ಲಿಗೂ ಬಂದರು.</verse>
				<verse number="7">ಅಲ್ಲಿಂದ ತಿರುಗಿಕೊಂಡು ಚೀದೋನ್, ತೂರ್ ಕೋಟೆ, ಹಿವ್ವಿಯರ ಮತ್ತು ಕಾನಾನ್ಯರ ಪಟ್ಟಣಗಳು ಇವುಗಳ ಮೇಲೆ ಯೆಹೂದ ಪ್ರಾಂತ್ಯದ ದಕ್ಷಿಣ ದಿಕ್ಕಿನಲ್ಲಿರುವ ಬೇರ್ಷೆಬಕ್ಕೆ ಬಂದರು.</verse>
				<verse number="8">ಹೀಗೆ ಒಂಬತ್ತು ತಿಂಗಳು ಇಪ್ಪತ್ತು ದಿವಸಗಳಲ್ಲಿ ನಾಡನ್ನೆಲ್ಲಾ ಸಂಚರಿಸಿ ಜೆರುಸಲೇಮಿಗೆ ಹಿಂದಿರುಗಿ ಬಂದರು.</verse>
				<verse number="9">ಯೋವಾಬನು ಅರಸನಿಗೆ ಒಪ್ಪಿಸಿದ ಜನಗಣತಿಯ ಅಂಕೆಸಂಖ್ಯೆಗಳಲ್ಲಿ ಇಸ್ರಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಎಂಟು ಲಕ್ಷ ಹಾಗು ಯೆಹೂದ್ಯರಲ್ಲಿ ಐದು ಲಕ್ಷ ಇದ್ದರು.</verse>
				<verse number="10">ಜನರ ಎಣಿಕೆ ಮಾಡಿಸಿದ ನಂತರ ದಾವೀದನನ್ನು ಮನಸ್ಸಾಕ್ಷಿ ಕಾಡತೊಡಗಿತು. ಆದುದರಿಂದ ಅವನು, “ಸರ್ವೇಶ್ವರಾ, ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ಪ್ರಾರ್ಥಿಸಿದನು.</verse>
				<verse number="11">ಅವನು ಮರುದಿನ ಬೆಳಿಗ್ಗೆ ಏಳುವಷ್ಟರಲ್ಲಿ ಅವನ ದರ್ಶಿಯಾದ ಗಾದ್ ಪ್ರವಾದಿಗೆ ಸರ್ವೇಶ್ವರ ದರ್ಶನವಿತ್ತು,</verse>
				<verse number="12">“ನೀನು ದಾವೀದನ ಹತ್ತಿರ ಹೋಗಿ ಅವನಿಗೆ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ; ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಅದನ್ನು ಆರಿಸಿಕೋ,’ ಎಂದು ಸರ್ವೇಶ್ವರ ನುಡಿಯುತ್ತಾರೆ ಎಂದು ಹೇಳು,” ಎಂದು ಆಜ್ಞಾಪಿಸಿದರು.</verse>
				<verse number="13">ಆಗ ಗಾದನು ದಾವೀದನ ಬಳಿಗೆ ಬಂದು, “ನಿಮ್ಮ ನಾಡಿನಲ್ಲಿ ಏಳು ವರ್ಷಗಳ ಬರಗಾಲ ಉಂಟಾಗಬೇಕೋ, ಇಲ್ಲವೇ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳ ತನಕ ನಿನ್ನನ್ನು ಓಡಿಸಿಬಿಡಬೇಕೋ, ಇಲ್ಲವೆ ನಿನ್ನ ನಾಡಿನಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವರಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು,” ಎಂದನು.</verse>
				<verse number="14">ಅದಕ್ಕೆ ದಾವೀದನು, “ನಾನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ. ಸರ್ವೇಶ್ವರನ ಕೈಯಲ್ಲೆ ಬೀಳುತ್ತೇನೆ; ಅವರು ಕೃಪಾಪೂರ್ಣರು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆ,” ಎಂದು ಹೇಳಿ ವ್ಯಾಧಿಯನ್ನು ಆಯ್ದುಕೊಂಡನು.</verse>
				<verse number="15">ಆಗ ಸರ್ವೇಶ್ವರ ಇಸ್ರಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದರು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನವರೆಗೂ ಇತ್ತು. ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿದ್ದ ಇಸ್ರಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.</verse>
				<verse number="16">ದೇವದೂತನು ಜೆರುಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಸರ್ವೇಶ್ವರ ಆ ಕೇಡಿನ ವಿಷಯದಲ್ಲಿ ನೊಂದುಕೊಂಡು, ಸಂಹಾರಕ ದೂತನಿಗೆ, “ಈಗ ಸಾಕು, ನಿನ್ನ ಕೈಯನ್ನು ಹಿಂತೆಗೆ,” ಎಂದು ಆಜ್ಞಾಪಿಸಿದರು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.</verse>
				<verse number="17">ದಾವೀದನು ಜನಸಂಹಾರಕ ದೂತನನ್ನು ಕಂಡಾಗ ಸರ್ವೇಶ್ವರನಿಗೆ, “ಮೂರ್ಖತನದಿಂದ ಪಾಪಮಾಡಿದವನು ನಾನು; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ನಿಮ್ಮ ಕೈ ನನ್ನನ್ನೂ ನನ್ನ ಮನೆಯವರನ್ನೂ ಶಿಕ್ಷಿಸಲಿ,” ಎಂದು ಬೇಡಿಕೊಂಡನು.</verse>
				<verse number="18">ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು, “ನೀವು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸಿ,” ಎಂದು ಹೇಳಿದನು.</verse>
				<verse number="19">ದಾವೀದನು ಗಾದನ ಮುಖಾಂತರ ತನಗಾದ ಸರ್ವೇಶ್ವರನ ಅಪ್ಪಣೆಯಂತೆ ಹೊರಟನು.</verse>
				<verse number="20">ದಾವೀದನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಂಡು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು.</verse>
				<verse number="21">“ನನ್ನ ಒಡೆಯರಾದ ಅರಸರು ತಮ್ಮ ಸೇವಕನ ಬಳಿಗೆ ಬರುವುದಕ್ಕೇನು ಕಾರಣ?” ಎಂದು ಕೇಳಿದನು. ದಾವೀದನು, “ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಸರ್ವೇಶ್ವರನಿಗಾಗಿ ಒಂದು ಪೀಠವನ್ನು ಕಟ್ಟುವುದಕ್ಕೆ ಬಂದಿದ್ದೇನೆ,” ಎಂದು ಉತ್ತರಕೊಟ್ಟನು.</verse>
				<verse number="22">ಆಗ ಅರೌನನು ದಾವೀದನಿಗೆ, “ನನ್ನ ಒಡೆಯರಾದ ಅರಸರು ತಮಗೆ ಇಷ್ಟವಾದುದನ್ನು ತೆಗೆದುಕೊಂಡು ಅರ್ಪಿಸೋಣವಾಗಲಿ; ಇಲ್ಲಿ ಬಲಿದಾನಕ್ಕೆ ಹೋರಿಗಳೂ, ಸೌದೆಗೆ ಹಂತೀಕುಂಟೆ ಮೊದಲಾದ ಎತ್ತಿನ ಸಾಮಾನುಗಳೂ ಇರುತ್ತವೆ.</verse>
				<verse number="23">ಇವುಗಳಲ್ಲಿ ಅರಸರ ಸೇವಕನಾದ ನಾನು ಅರಸರಿಗೆ ಅರ್ಪಿಸುತ್ತೇನೆ. ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಪ್ರಸನ್ನರಾಗಲಿ!” ಎಂದು ಹೇಳಿದನು.</verse>
				<verse number="24">ಅರಸರು ಅರೌನನಿಗೆ, “ಹಾಗಲ್ಲ, ನಾನು ನಿನ್ನಿಂದ ಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನನ್ನ ದೇವರಾದ ಸರ್ವೇಶ್ವರನಿಗೆ ಸುಮ್ಮನೆ ಸಿಕ್ಕಿದ್ದನ್ನು ಬಲಿದಾನವಾಗಿ ಅರ್ಪಿಸಲೊಲ್ಲೆನು,” ಎಂದು ಹೇಳಿ ಆ ಕಣವನ್ನೂ ಹೋರಿಗಳನ್ನೂ ಐವತ್ತು ಬೆಳ್ಳಿ ನಾಣ್ಯಕ್ಕೆ ಕೊಂಡುಕೊಂಡನು.</verse>
				<verse number="25">ಅಲ್ಲಿ ಸರ್ವೇಶ್ವರನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಅವರಿಗೆ ದಹನಬಲಿಗಳನ್ನು ಹಾಗು ಶಾಂತಿಸಮಾಧಾನದ ಬಲಿಗಳನ್ನು ಅರ್ಪಿಸಿದನು. ಹೀಗೆ ನಾಡಿನ ಮೇಲಿದ್ದ ಸರ್ವೇಶ್ವರನ ಕೋಪ ಶಮನವಾಯಿತು. ಇಸ್ರಯೇಲರಲ್ಲಿದ್ದ ಆ ಸಂಹಾರಕವ್ಯಾಧಿ ನಿಂತುಹೋಯಿತು.</verse>
			</chapter>
		</book>
		<book number="11">
			<chapter number="1">
				<verse number="1">ಅರಸ ದಾವೀದನು ಹಣ್ಣು ಹಣ್ಣು ಮುದುಕನಾದ; ಎಷ್ಟು ಕಂಬಳಿಗಳನ್ನು ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.</verse>
				<verse number="2">ಆದುದರಿಂದ ಅವನ ಸೇವಕರು, “ಒಡೆಯರೇ, ಅರಸರೇ, ತಮ್ಮ ಸನ್ನಿಧಿಯಲ್ಲಿದ್ದುಕೊಂಡು ತಮಗೆ ಶುಶ್ರೂಷೆಮಾಡಲು ಒಬ್ಬ ಕನ್ನಿಕೆಯನ್ನು ಹುಡುಕಬೇಕಾಗಿದೆ. ಆಕೆ ನಮ್ಮ ಒಡೆಯರೂ ಅರಸರೂ ಆದ ತಮ್ಮ ಮಗ್ಗುಲಲ್ಲೇ ಮಲಗಿ ತಮ್ಮನ್ನು ಬೆಚ್ಚಗಿರಿಸುವಳು,” ಎಂದು ಹೇಳಿದರು.</verse>
				<verse number="3">ಅದರಂತೆಯೇ, ಇಸ್ರಯೇಲರ ಪ್ರಾಂತ್ಯಗಳಲೆಲ್ಲಾ ಅತಿ ಸುಂದರಿಯಾದ ಒಬ್ಬ ಹುಡುಗಿಯನ್ನು ಹುಡುಕುವುದಕ್ಕೆ ಹೋದರು. ಶೂನೇಮ್ ಊರಿನ ಅಬೀಷಗ್ ಎಂಬವಳನ್ನು ಕಂಡುಹಿಡಿದು ಆಕೆಯನ್ನು ಅರಸನ ಬಳಿಗೆ ಕರೆದುಕೊಂಡು ಬಂದರು.</verse>
				<verse number="4">ಬಹಳ ಚೆಲುವೆ ಆದ ಆಕೆ ಅರಸನನ್ನು ಶುಶ್ರೂಷೆ ಮಾಡುವ ದಾದಿಯಾದಳು. ಆದರೆ ಅರಸ ಅಬೀಷಗಳನ್ನು ಕೂಡಲಿಲ್ಲ.</verse>
				<verse number="5">ಈಗಾಗಲೇ ಅಬ್ಷಾಲೋಮನು ಸತ್ತುಹೋಗಿದ್ದನು. ದಾವೀದನಿಗೆ ಹಗ್ಗೀತಳಲ್ಲಿ ಹುಟ್ಟಿದ ಅದೋನಿಯನೇ ಜೀವದಿಂದ ಉಳಿದವರಲ್ಲಿ ಹಿರಿಯ ಮಗ. ಅವನು ಬಹಳ ಸುಂದರನು. ದಾವೀದನು ಯಾವುದೇ ವಿಷಯದಲ್ಲಿ ಅವನನ್ನು ಎಂದೂ ಗದರಿಸಿರಲಿಲ್ಲ. ತಾನೇ ರಾಜನಾಗಬೇಕೆಂಬ ಆಕಾಂಕ್ಷೆ ಅವನದು. ಎಂದೇ ತನಗೋಸ್ಕರ ರಥ, ರಥಾಶ್ವಗಳನ್ನು ಹಾಗು ಐವತ್ತು ಮಂದಿ ಬೆಂಗಾವಲಿಗರನ್ನು ನೇಮಿಸಿಕೊಂಡಿದ್ದನು.</verse>
				<verse number="6"></verse>
				<verse number="7">ಜೆರೂಯಳ ಮಗ ಯೋವಾಬನನ್ನೂ ಯಾಜಕ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡಿದ್ದನು. ಇವರು ಅವನಿಗೆ ಬೆಂಬಲ ವ್ಯಕ್ತಪಡಿಸಿದ್ದರು.</verse>
				<verse number="8">ಆದರೆ ಯಾಜಕ ಚಾದೋಕ್, ಯೆಹೋಯಾದಾವನ ಮಗ ಬೆನಾಯ, ಪ್ರವಾದಿ ನಾತಾನ್, ಶಿಮ್ಮೀ, ರೇಗೀ ಎಂಬವರೂ ದಾವೀದನ ವಿಶೇಷ ಕಾವಲಾಳುಗಳೂ ಅದೋನಿಯನನ್ನು ಬೆಂಬಲಿಸಲಿಲ್ಲ.</verse>
				<verse number="9">ಒಮ್ಮೆ ಅದೋನೀಯನು ರೋಗೆಲ್ ಬುಗ್ಗೆಯ ಬಳಿಯಿರುವ ಜೋಹೆಲೆತ್ ಬಂಡೆಯ ಮೇಲೆ ಕುರಿ, ಹೋರಿ ಮೊದಲಾದ ಕೊಬ್ಬಿದ ಪಶುಗಳನ್ನು ಬಲಿದಾನ ಮಾಡಿಸಿದನು; ಅರಸುಕುಮಾರರಾದ ತನ್ನ ಸಹೋದರರನ್ನು ಹಾಗು ಆಸ್ಥಾನದ ಎಲ್ಲ ಯೆಹೂದ್ಯ ಅಧಿಕಾರಿಗಳನ್ನು ಔತಣಕ್ಕೆ ಆಮಂತ್ರಿಸಿದನು.</verse>
				<verse number="10">ಆದರೆ, ಪ್ರವಾದಿ ನಾತಾನನನ್ನಾಗಲಿ, ಬೆನಾಯನನ್ನಾಗಲಿ, ವಿಶೇಷ ಕಾವಲಾಳುಗಳನ್ನಾಗಲಿ, ತಮ್ಮನಾದ ಸೊಲೊಮೋನನನ್ನಾಗಲಿ ಕರೆಯಲಿಲ್ಲ.</verse>
				<verse number="11">ಆಗ ನಾತಾನನು ಸೊಲೊಮೋನನ ತಾಯಿಯಾದ ಬತ್ಷೆಬೆಗೆ, “ಹಗ್ಗೀತಳ ಮಗ ಅದೋನೀಯನು, ನಮ್ಮ ಒಡೆಯ ದಾವೀದರಿಗೆ ತಿಳಿಯದೆಯೇ ಅರಸನಾದನೆಂಬುದನ್ನು ನೀನು ಕೇಳಿರಬೇಕಲ್ಲವೆ?</verse>
				<verse number="12">ಈಗ ನಿನ್ನ ಮತ್ತು ನಿನ್ನ ಮಗ ಸೊಲೊಮೋನನ ಜೀವವನ್ನು ಉಳಿಸಿಕೊಳ್ಳಬೇಕಾದರೆ ನನ್ನ ಆಲೋಚನೆಯನ್ನು ಕೇಳು;</verse>
				<verse number="13">ನೀನು ಅರಸ ದಾವೀದನ ಬಳಿಗೆ ಹೋಗಿ, ‘ನನ್ನ ಒಡೆಯರಾದ ಅರಸರು ತಮ್ಮ ತರುವಾಯ ನನ್ನ ಮಗನಾದ ಸೊಲೊಮೋನನೇ ಆಳಬೇಕು, ಅವನೇ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂದು ತಮ್ಮ ದಾಸಿಯಾದ ನನಗೆ ಪ್ರಮಾಣಮಾಡಿ ಹೇಳಿದಿರಲ್ಲವೇ? ಹೀಗಿದ್ದ ಮೇಲೆ ಅದೋನೀಯನು ಅರಸನಾದುದು ಹೇಗೆ?’ ಎಂದು ಕೇಳು.</verse>
				<verse number="14">ನೀನು ಅರಸನೊಡನೆ ಮಾತಾಡುತ್ತಿರುವಾಗ ನಾನೂ ಬಂದು ನಿನ್ನ ಮಾತು ಸತ್ಯವೆಂದು ಅನುಮೋದಿಸುವೆನು,” ಎಂದನು.</verse>
				<verse number="15">ಅರಸನು ಬಹಳ ಮುದುಕನಾಗಿದ್ದರಿಂದ, ಶೂನೇಮ್ಯಳಾದ ಅಬೀಷಗಳಿಂದ ಶುಶ್ರೂಷೆ ಪಡೆಯುತ್ತಾ ಒಳಗಿನ ಕೋಣೆಯಲ್ಲಿಯೇ ಇರುತ್ತ ಇದ್ದನು.</verse>
				<verse number="16">ಬತ್ಷೆಬೆ ಅಲ್ಲಿಗೆ ಹೋಗಿ ಅರಸನಿಗೆ ಬಾಗಿ ನಮಸ್ಕರಿಸಿದಳು. ಅರಸನು, “ಏನು, ನಿನಗೇನು ಬೇಕು?” ಎಂದು ಆಕೆಯನ್ನು ವಿಚಾರಿಸಿದನು.</verse>
				<verse number="17">ಆಗ ಆಕೆ, “ನನ್ನ ಒಡೆಯರು ತಮ್ಮ ದೇವರಾದ ಸರ್ವೇಶ್ವರನ ಮೇಲೆ ಆಣೆಯಿಟ್ಟು ತಮ್ಮ ದಾಸಿಯಾದ ನನಗೆ, ‘ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಅರಸನಾಗಬೇಕು; ನಿಶ್ಚಯವಾಗಿ ಅವನೇ ನನ್ನ ಸಿಂಹಾಸನದ ಮೇಲೆ ಕೂತುಕೊಳ್ಳಬೇಕು,’ ಎಂಬುದಾಗಿ ಹೇಳಿದಿರಲ್ಲವೆ?</verse>
				<verse number="18">ಆದರೆ ಈಗ ಅದೋನೀಯನು ನಮ್ಮ ಒಡೆಯರೂ ಅರಸರೂ ಆದ ನಿಮಗೂ ತಿಳಿಯದೆಯೇ ರಾಜನಾಗಿಬಿಟ್ಟಿದ್ದಾನೆ.</verse>
				<verse number="19">ಹೋರಿ, ಕುರಿ ಮೊದಲಾದ ಹಲವು ಕೊಬ್ಬಿದ ಪಶುಗಳನ್ನು ಬಲಿಯಾಗಿ ಅರ್ಪಿಸಿದ್ದಾನೆ; ನಿಮ್ಮ ಸೇವಕ ಸೊಲೊಮೋನನನ್ನು ಬಿಟ್ಟು, ಎಲ್ಲಾ ರಾಜಪುತ್ರರನ್ನು, ಯಾಜಕ ಎಬ್ಯಾತಾರನನ್ನು ಹಾಗು ಸೇನಾಪತಿ ಯೋವಾಬನನ್ನು ಔತಣಕ್ಕೆ ಕರೆದಿದ್ದಾನೆ.</verse>
				<verse number="20">ನನ್ನ ಒಡೆಯರೂ ಅರಸರೂ ಆದ ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ತಾವೇ ಗೊತ್ತುಮಾಡಬೇಕೆಂದು ಇಸ್ರಯೇಲರೆಲ್ಲರು ಕುತೂಹಲದಿಂದ ಕಾದುಕೊಂಡಿದ್ದಾರೆ.</verse>
				<verse number="21">ನನ್ನ ಒಡೆಯರೂ ಅರಸರೂ ಆದ ತಾವು ಹಾಗೇ ಮಾಡದೆ, ಸತ್ತು ಪಿತೃಗಳ ಬಳಿಗೆ ಸೇರಿಕೊಂಡರೆ, ನಾನೂ ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುತ್ತೇವೆ,” ಎಂದು ಹೇಳಿದಳು.</verse>
				<verse number="22">ಆಕೆ ಹೀಗೆ ಅರಸನ ಸಂಗಡ ಮಾತಾಡುತ್ತಿರುವಾಗಲೇ ಪ್ರವಾದಿ ನಾತಾನನು ಅಲ್ಲಿಗೆ ಬಂದನು.</verse>
				<verse number="23">ಸೇವಕರು ನಾತಾನನು ಬಂದಿರುವ ಸಂಗತಿಯನ್ನು ಅರಸನಿಗೆ ತಿಳಿಸಿದರು. ನಾತಾನನು ಅರಸನ ಮುಂದೆ ಹೋಗಿ ಸಾಷ್ಟಾಂಗ ನಮಸ್ಕಾರ ಮಾಡಿದನು.</verse>
				<verse number="24">“ನನ್ನ ಒಡೆಯರೂ ಅರಸರೂ ಆದ ನೀವು ಅದೋನೀಯನಿಗೆ ಅರಸನಾಗುವುದಕ್ಕೂ ನಿಮ್ಮ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದಕ್ಕೂ ಅಪ್ಪಣೆಕೊಟ್ಟಿರುವಂತೆ ಕಾಣುತ್ತದೆ.</verse>
				<verse number="25">ಅವನು ಇಲ್ಲಿಂದ ಇಳಿದುಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಬಲಿಯಾಗಿ ಅರ್ಪಿಸಿದ್ದಾನೆ. ರಾಜಪುತ್ರರೆಲ್ಲರನ್ನು, ಸೇನಾಪತಿಗಳನ್ನು ಹಾಗು ಯಾಜಕ ಎಬ್ಯಾತಾರನನ್ನು ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲೇ ಅನ್ನಪಾನಗಳನ್ನು ತೆಗೆದುಕೊಂಡು ಅರಸನಾದ ಅದೋನೀಯನು ಚಿರಂಜೀವಿಯಾಗಿ ಇರಲಿ!’ ಎಂದು ಕೂಗುತ್ತಿದ್ದಾರೆ.</verse>
				<verse number="26">ಆದರೆ ಅವನು ನಿಮ್ಮ ಸೇವಕನಾದ ನನ್ನನ್ನು, ಯಾಜಕ ಚಾದೋಕ್, ಯೆಹೋಯಾದಾವನ ಮಗ ಬೆನಾಯ ಎಂಬವರನ್ನು ಹಾಗು ನಿಮ್ಮ ಸೇವಕ ಸೊಲೊಮೋನನನ್ನು ಔತಣಕ್ಕೆ ಕರೆಯಲಿಲ್ಲ.</verse>
				<verse number="27">ಈ ಕಾರ್ಯ ನಮ್ಮ ಒಡೆಯರೂ ಅರಸರೂ ಆದ ನಿಮ್ಮಿಂದಲೇ ನಡೆದಿರುವುದಾದರೆ, ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ನಿಮ್ಮ ಸೇವಕನಾದ ನನಗೆ ತಿಳಿಸಬಾರದಾಗಿತ್ತೇ?” ಎಂದು ಹೇಳಿದನು.</verse>
				<verse number="28">ಅರಸ ದಾವೀದನು ಬತ್ಷೆಬೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಆಕೆ ಬಂದು ಅರಸನ ಮುಂದೆ ನಿಂತಳು. ಅರಸ ಆಕೆಗೆ,</verse>
				<verse number="29">“ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿ ಕಾಪಾಡಿದ ಸರ್ವೇಶ್ವರನಾಣೆ,</verse>
				<verse number="30">ನನ್ನ ತರುವಾಯ ನನ್ನ ಮಗ ಸೊಲೊಮೋನನೇ ಅರಸನಾಗಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು. ನಾನು ನಿನಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಮಾಡಿದ ಈ ಪ್ರಮಾಣವನ್ನು ಈ ದಿನವೇ ನೆರವೇರಿಸುತ್ತೇನೆ,” ಎಂದನು.</verse>
				<verse number="31">ಆಗ ಬತ್ಷೆಬೆ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದಳು, “ನನ್ನೊಡೆಯರಾದ ದಾವೀದರಸರು ಸುದೀರ್ಘಕಾಲ ಬಾಳಲಿ!” ಎಂದಳು.</verse>
				<verse number="32">ಅನಂತರ ಅರಸ ದಾವೀದನು ತನ್ನ ಸೇವಕರಿಗೆ, “ಯಾಜಕ ಚಾದೋಕ್, ಪ್ರವಾದಿ ನಾತಾನ್ ಹಾಗು ಯೆಹೋಯಾದಾವನ ಮಗ ಬೆನಾಯ ಇವರನ್ನು ಕರೆಯಿರಿ,” ಎಂದು ಆಜ್ಞಾಪಿಸಿದನು.</verse>
				<verse number="33">ಅವರು ಸನ್ನಿಧಿಗೆ ಬರಲು ಅರಸನು ಅವರಿಗೆ, “ನೀವು ನನ್ನ ಸೇವಕರನ್ನು ಕರೆದುಕೊಂಡು, ನನ್ನ ಮಗ ಸೊಲೊಮೋನನನ್ನು ನನ್ನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿಕೊಂಡು, ಗೀಹೋನ್ ಬುಗ್ಗೆಗೆ ಹೋಗಿರಿ.</verse>
				<verse number="34">ಅಲ್ಲಿ ಯಾಜಕ ಚಾದೋಕನು ಹಾಗು ಪ್ರವಾದಿ ನಾತಾನನು ಅವನನ್ನು ಇಸ್ರಯೇಲರ ಅರಸನನ್ನಾಗಿ ಅಭಿಷೇಕಿಸಲಿ. ಅನಂತರ ಕೊಂಬನ್ನೂದಿರಿ. ಎಲ್ಲರು ‘ಅರಸ ಸೊಲೊಮೋನನು ಚಿರಂಜೀವಿಯಾಗಿರಲಿ!’ ಎಂದು ಘೋಷಿಸಲಿ.</verse>
				<verse number="35">ಆಮೇಲೆ ನೀವು ಅವನ ಹಿಂದೆ ಬನ್ನಿ; ಅವನು ಅರಮನೆಯನ್ನು ಪ್ರವೇಶಿಸಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ನನಗೆ ಬದಲಾಗಿ ಆಳಬೇಕು. ನಾನು ಇಸ್ರಯೇಲರ ಮತ್ತು ಯೆಹೂದ್ಯರ ಮೇಲೆ ಅವನನ್ನೇ ಅಧಿಪತಿಯನ್ನಾಗಿ ನೇಮಿಸಿದ್ದೇನೆ,” ಎಂದನು.</verse>
				<verse number="36">ಯೆಹೋಯಾದಾವನ ಮಗ ಬೆನಾಯನು ಅರಸನಿಗೆ, “ಹಾಗೆಯೇ ಆಗಲಿ; ನನ್ನ ಒಡೆಯರ ಹಾಗು ಅರಸರ ದೇವರಾದ ಸರ್ವೇಶ್ವರ ಇದನ್ನು ಸ್ಥಿರಪಡಿಸಲಿ.</verse>
				<verse number="37">ಸರ್ವೇಶ್ವರಸ್ವಾಮಿ ನನ್ನ ಒಡೆಯರೂ ಅರಸರೂ ಆದ ನಿಮ್ಮ ಸಂಗಡ ಇದ್ದ ಹಾಗೆ ಸೊಲೊಮೋನನ ಸಂಗಡವೂ ಇದ್ದು, ರಾಜ್ಯವನ್ನು ನನ್ನ ಒಡೆಯರೂ ಅರಸರೂ ಆದ ನಿಮ್ಮ ಕಾಲದಲ್ಲಿ ಇದ್ದುದಕ್ಕಿಂತ ಹೆಚ್ಚು ಅಭಿವೃದ್ಧಿಮಾಡಲಿ!” ಎಂದು ನುಡಿದನು.</verse>
				<verse number="38">ಆಗ ಯಾಜಕ ಚಾದೋಕ್, ಪ್ರವಾದಿ ನಾತಾನ್ ಹಾಗು ಯೆಹೋಯಾದಾವನ ಮಗ ಬೆನಾಯ ಎಂಬವರು ‘ಕೆರೇತ್ಯ’, ‘ಪೆಲೇತ್ಯ’ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು, ಸೊಲೊಮೋನನನ್ನು ಅರಸ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು.</verse>
				<verse number="39">ಯಾಜಕ ಚಾದೋಕನು ದೇವದರ್ಶನದ ಗುಡಾರದಲ್ಲಿದ್ದ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೆ ಕೊಂಬನ್ನೂದುತ್ತಾ ಜನರೆಲ್ಲರು, “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ!” ಎಂದು ಘೋಷಿಸಿದರು.</verse>
				<verse number="40">ತರುವಾಯ ಅವರೆಲ್ಲರು ಅವನನ್ನು ಹಿಂಬಾಲಿಸಿ, ಕೊಳಲೂದುತ್ತಾ ಹರ್ಷಾನಂದದಿಂದ ಆರ್ಭಟಿಸುತ್ತಾ, ಹಿಂದಿರುಗಿ ಬಂದರು. ಅವರ ಜಯಕಾರದ ಕೂಗು ಭೂಮಿಯನ್ನೇ ನಡುಗಿಸುವಂತಿತ್ತು!</verse>
				<verse number="41">ಅದೋನೀಯನೂ ಅವನ ಸಂಗಡ ಇದ್ದ ಅತಿಥಿಗಳೂ ಭೋಜನವನ್ನು ಮುಗಿಸುವಷ್ಟರಲ್ಲೇ ಅವರಿಗೆ ಈ ಆರ್ಭಟ ಕೇಳಿಸಿತು. ಕೊಂಬಿನ ಧ್ವನಿ ಕೇಳಿದಾಗ ಯೋವಾಬನು, “ಪಟ್ಟಣದಲ್ಲಿ ಇಂಥ ಗದ್ದಲವೇಕೆ?” ಎಂದು ವಿಚಾರಿಸುತ್ತಿರುವಾಗಲೇ</verse>
				<verse number="42">ಯಾಜಕ ಎಬ್ಯಾತಾರನ ಮಗ ಯೋನಾತಾನನು ಅಲ್ಲಿಗೆ ಬಂದನು. ಅದೋನೀಯನು ಅವನಿಗೆ, “ನಿನ್ನಂಥ ಯೋಗ್ಯಪುರುಷ ಶುಭಸಮಾಚಾರವನ್ನೇ ತಂದಿರಬೇಕು, ಒಳಗೆ ಬಾ,” ಎಂದನು.</verse>
				<verse number="43">ಯೋನಾತಾನನು, “ಶುಭಸಮಾಚಾರವಲ್ಲ! ನಮ್ಮೊಡೆಯನೂ ಅರಸನೂ ಆದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ.</verse>
				<verse number="44">ಯಾಜಕ ಚಾದೋಕ್, ಪ್ರವಾದಿ ನಾತಾನ್ ಹಾಗು ಯೆಹೋಯಾದಾವನ ಮಗ ಬೆನಾಯ ಇವರನ್ನೂ ಕೆರೇತ್ಯ-ಪೆಲೇತ್ಯರನ್ನೂ ಅರಸರು ಅವನ ಜೊತೆಯಲ್ಲಿ ಕಳುಹಿಸಿದ್ದಾರೆ. ಅವರು ಅವನನ್ನು ಅರಸನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿದ್ದಾರೆ.</verse>
				<verse number="45">ಯಾಜಕ ಚಾದೋಕನೂ ಪ್ರವಾದಿ ನಾತಾನನೂ ಗೀಹೋನಿನ ಬಳಿಯಲ್ಲಿ ಅವನಿಗೆ ರಾಜಾಭಿಷೇಕ ಮಾಡಿದ್ದಾರೆ. ಅಲ್ಲಿಂದ ಅವರು ಹರ್ಷಾನಂದದಿಂದ ಆರ್ಭಟಿಸುತ್ತಾ ಪಟ್ಟಣಕ್ಕೆ ಬಂದಿದ್ದಾರೆ. ಇದರಿಂದಲೇ ಪಟ್ಟಣದಲ್ಲಿ ಗದ್ದಲವುಂಟಾಗಿದೆ; ನೀವು ಕೇಳಿದ ಆರ್ಭಟವು ಇದೇ.</verse>
				<verse number="46">ಇದಲ್ಲದೆ, ಸೊಲೊಮೋನನು ರಾಜಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.</verse>
				<verse number="47">ಅರಸ ದಾವೀದನ ಸೇವಕರು ನಮ್ಮ ಒಡೆಯನೂ ಅರಸನೂ ಆದ ದಾವೀದನ ಮುಂದೆ ಬಂದು, ‘ನಿಮ್ಮ ದೇವರು ನಿಮ್ಮ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ! ರಾಜ್ಯವನ್ನು ನಿಮ್ಮ ಕಾಲದಲ್ಲಿ ಇದ್ದುದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಅಭಿವೃದ್ಧಿಗೊಳಿಸಲಿ!’ ಎಂದು ಅವನನ್ನು ಹರಸಿದ್ದಾರೆ. ಅರಸನು ತನ್ನ ಹಾಸಿಗೆಯ ಮೇಲೆ ಬಿದ್ದುಕೊಂಡು,</verse>
				<verse number="48">‘ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!’ ಎಂದು ಹೇಳಿದ್ದಾನೆ,” ಎಂದನು.</verse>
				<verse number="49">ಆಗ ಅದೋನೀಯನಿಂದ ಔತಣಕ್ಕೆ ಆಮಂತ್ರಿತರಾಗಿದ್ದವರೆಲ್ಲರು ಭಯಪಟ್ಟು ತಮ್ಮ ತಮ್ಮ ಮನೆಗಳಿಗೆ ಹೊರಟುಹೋದರು.</verse>
				<verse number="50">ಅದೋನೀಯನು ಸೊಲೊಮೋನನಿಗೆ ಹೆದರಿ, ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.</verse>
				<verse number="51">ದೂತರು ಬಂದು ಸೊಲೊಮೋನನಿಗೆ, “ಅದೋನೀಯನು ನಿನಗೆ ಹೆದರಿ ಬಲಿಪೀಠದ ಕೊಂಬುಗಳನ್ನು ಹಿಡಿದುಕೊಂಡಿದ್ದಾನೆ. ಅರಸ ಸೊಲೊಮೋನನು ನನ್ನನ್ನು ಕತ್ತಿಯಿಂದ ಸಂಹರಿಸುವುದಿಲ್ಲವೆಂದು ಈ ದಿನ ನನಗೆ ಪ್ರಮಾಣ ಮಾಡಬೇಕೆಂದು ಬೇಡಿಕೊಳ್ಳುತ್ತಾನೆ,” ಎಂದು ತಿಳಿಸಿದರು.</verse>
				<verse number="52">ಆಗ ಸೊಲೊಮೋನನು, “ಅದೋನೀಯನು ಸತ್ಪುರುಷನಾಗಿ ನಡೆಯುವುದಾದರೆ ಅವನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ; ಆದರೆ ಅವನಲ್ಲಿ ಕೆಟ್ಟತನ ಕಂಡುಬರುವುದಾದರೆ, ಅವನು ಖಂಡಿತವಾಗಿ ಸಾಯುವನು,” ಎಂದು ಹೇಳಿದನು.</verse>
				<verse number="53">ಆಳುಗಳನ್ನು ಕಳುಹಿಸಿ ಅವನನ್ನು ಬಲಿಪೀಠದ ಬಳಿಯಿಂದ ಕರೆದುತರುವಂತೆ ಮಾಡಿದನು. ಅವನು ಬಂದು, ಅರಸ ಸೊಲೊಮೋನನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ ಮನೆಗೆ ಹೋಗಲು ಅಪ್ಪಣೆಕೊಟ್ಟನು.</verse>
			</chapter>
			<chapter number="2">
				<verse number="1">ದಾವೀದನ ಮರಣಸಮಯ ಸಮೀಪಿಸಿದಾಗ ಅವನು ತನ್ನ ಮಗ ಸೊಲೊಮೋನನಿಗೆ ಹೀಗೆಂದು ಆಜ್ಞಾಪಿಸಿದನು:</verse>
				<verse number="2">“ಜಗದ ಜನರೆಲ್ಲರು ಹೋಗುವ ದಾರಿಯನ್ನು ನಾನು ಈಗ ಹಿಡಿಯಬೇಕು; ನೀನು ಧೈರ್ಯದಿಂದಿರು. ನಿನ್ನ ಸಾಮರ್ಥ್ಯವನ್ನು ತೋರಿಸು.</verse>
				<verse number="3">ನಿನ್ನ ದೇವರಾದ ಸರ್ವೇಶ್ವರಸ್ವಾಮಿಯ ಕಟ್ಟಳೆಯನ್ನು ಕೈಗೊಂಡು ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಅವರ ಆಜ್ಞಾನಿಯಮ-ವಿಧಿನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ ಎಲ್ಲಿಗೆ ಹೋದರೂ ಕೃತಾರ್ಥನಾಗುವೆ.</verse>
				<verse number="4">ಇದಲ್ಲದೆ ಸರ್ವೇಶ್ವರ, ‘ನಿನ್ನ ಸಂತಾನದವರು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಂಬಿಗಸ್ತರಾಗಿ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿದ್ದರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು,’ ಎಂದು ನನಗೆ ಮಾಡಿದ ವಾಗ್ದಾನವನ್ನು ಅವರು ಸ್ಥಿರಪಡಿಸುವರು.</verse>
				<verse number="5">“ಚೆರೂಯಳ ಮಗ ಯೋವಾಬನು ನನಗೆ ಮಾಡಿರುವುದನ್ನು ನೀನು ಬಲ್ಲೆ; ಅವನು ಇಬ್ಬರು ಇಸ್ರಯೇಲ್ ಸೇನಾಪತಿಗಳನ್ನು ಅಂದರೆ, ನೇರನ ಮಗ ಅಬ್ನೇರನನ್ನೂಯೆತೆರನ ಮಗ ಅಮಾಸನನ್ನೂ ಕೊಂದುಹಾಕಿದನು. ಯುದ್ಧಕಾಲದಲ್ಲಿಯೋ ಎಂಬಂತೆ ಸಮಾಧಾನಕಾಲದಲ್ಲಿಯೂ ರಕ್ತಸುರಿಸಿ ಆ ಕಲೆಯನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.</verse>
				<verse number="6">ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ಗೊತ್ತಿದೆ; ಅವನ ಮುದಿತಲೆ ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು.</verse>
				<verse number="7">“ಆದರೆ ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡು; ಅವರು ದಿನನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಏಕೆಂದರೆ ನಾನು ನಿನ್ನ ಸಹೋದರ ಅಬ್ಷಾಲೋಮನಿಂದ ತಪ್ಪಿಸಿಕೊಂಡು ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.</verse>
				<verse number="8">ಬೆನ್ಯಾಮೀನ್ಯನಾದ ಗೇರನ ಮಗನೂ ಬಹುರೀಮ್ ಊರಿನವನೂ ಆದ ಶಿಮ್ಮಿ ನಿನ್ನ ಬಳಿ ಇರುತ್ತಾನೆ; ನಾನು ಮಹನಯಿಮಿಗೆ ಹೋದಾಗ ಅವನು ನನ್ನನ್ನು ಬಹುಕ್ರೂರವಾಗಿ ಶಪಿಸಿದನು; ಆದರೂ ಅವನು ನನ್ನನ್ನು ಎದುರುಗೊಳ್ಳುವುದಕ್ಕೆ ಜೋರ್ಡನಿಗೆ ಬಂದಾಗ ನಾನು ಅವನಿಗೆ, ‘ನಿನ್ನನ್ನು ಕೊಲ್ಲುವುದಿಲ್ಲ,’ ಎಂಬುದಾಗಿ ಸರ್ವೇಶ್ವರನ ಹೆಸರಿನಲ್ಲಿ ಪ್ರಮಾಣಮಾಡಿದೆ.</verse>
				<verse number="9">ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ; ನೀನು ಬುದ್ಧಿವಂತ; ಅವನ ಮುದಿತಲೆ ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿದೆ.”</verse>
				<verse number="10">ಅನಂತರ ದಾವೀದನು ಮರಣಹೊಂದಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿ ಮಾಡಿದರು.</verse>
				<verse number="11">ದಾವೀದನು ಇಸ್ರಯೇಲರನ್ನು ಆಳಿದ್ದು ನಾಲ್ವತ್ತು ವರ್ಷ; ಹೆಬ್ರೋನಿನಲ್ಲಿ ಏಳು ವರ್ಷ, ಜೆರುಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳಿದನು.</verse>
				<verse number="12">ಸೊಲೊಮೋನನು ತನ್ನ ತಂದೆ ದಾವೀದನ ಸಿಂಹಾಸನವನ್ನು ಏರಿದನು. ಅವನ ರಾಜ್ಯ ಸಮೃದ್ಧಿಯಾಗಿ ಬೆಳೆಯಿತು.</verse>
				<verse number="13">ಹಗ್ಗೀತಳ ಮಗ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಯ ದರ್ಶನಕ್ಕೆ ಬಂದನು. ಆಕೆ ಅವನನ್ನು, “ನೀನು ಸಮಾಧಾನದಿಂದ ಬಂದಿರುತ್ತೀಯೋ?” ಎಂದು ಕೇಳಿದಳು. ಅವನು, “ಹೌದು, ಸಮಾಧಾನದಿಂದ ಬಂದಿದ್ದೇನೆ,” ಎಂದನು.</verse>
				<verse number="14">ಆಮೇಲೆ ಅವನು, “ನಿಮಗೊಂದು ಮಾತು ಹೇಳಬೇಕೆಂದು ಬಂದಿದ್ದೇನೆ,” ಎನ್ನಲು ಆಕೆ, “ಹೇಳು,” ಎಂದಳು.</verse>
				<verse number="15">ಆಗ ಅವನು, “ರಾಜ್ಯ ನನಗೆ ಬರಬೇಕಾಗಿತ್ತು; ನಾನೇ ಅರಸನಾಗುವೆನೆಂದು ಇಸ್ರಯೇಲರೆಲ್ಲರು ಎದುರು ನೋಡುತ್ತಿದ್ದರೆಂಬುದು ನಿನಗೆ ತಿಳಿದ ವಿಷಯ. ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಸರ್ವೇಶ್ವರನಿಂದಲೇ ಅವನಿಗೆ ದೊರಕಿತು.</verse>
				<verse number="16">ಅದಿರಲಿ, ನನ್ನದೊಂದು ಬಿನ್ನಹವಿದೆ; ಅದನ್ನು ತಿರಸ್ಕರಿಸಬೇಡಿ,” ಎಂದನು. ಅದಕ್ಕೆ ಬತ್ಷೆಬೆ, “ಅದೇನು ಹೇಳು,” ಎಂದಳು.</verse>
				<verse number="17">ಅವನು, “ದಯವಿಟ್ಟು ಶೂನೇಮ್ಯಳಾದ ಅಬೀಷಗಳನ್ನು ನನಗೆ ಹೆಂಡತಿಯನ್ನಾಗಿ ಕೊಡಬೇಕೆಂದು ಅರಸ ಸೊಲೊಮೋನನಿಗೆ ಹೇಳಿ; ಅವನು ನಿಮ್ಮ ಮಾತನ್ನು ತಳ್ಳುವುದಿಲ್ಲ,” ಎಂದನು.</verse>
				<verse number="18">ಬತ್ಷೆಬೆ, “ಒಳ್ಳೇದು, ನಾನು ನಿನ್ನ ಪರವಾಗಿ ಸನ್ನಿಧಿಯಲ್ಲಿ ಅರಿಕೆಮಾಡುತ್ತೇನೆ,” ಎಂದು ಹೇಳಿದಳು.</verse>
				<verse number="19">ಆಕೆ ಅದೋನೀಯನ ಪರವಾಗಿ ಮಾತಾಡಲು ಅರಸ ಸೊಲೊಮೋನನ ಬಳಿಗೆ ಬರುತ್ತಿರುವಾಗ ಅರಸನೇ ಎದ್ದುಹೋಗಿ ಆಕೆಯನ್ನು ಎದುರುಗೊಂಡು ನಮಸ್ಕರಿಸಿದನು. ಅನಂತರ ತಾನು ಸಿಂಹಾಸನದ ಮೇಲೆ ಕುಳಿತು ರಾಜಮಾತೆಗಾಗಿ ಒಂದು ಆಸನವನ್ನು ತರಿಸಿದನು. ಆಕೆ ಅವನ ಬಲಗಡೆಯಲ್ಲಿ ಕುಳಿತುಕೊಂಡಳು.</verse>
				<verse number="20">“ಒಂದು ಸಣ್ಣ ಬಿನ್ನಹವಿದೆ, ತಿರಸ್ಕರಿಸಬೇಡ,” ಎಂದು ಹೇಳಿದಳು. ಅರಸನು, “ತಾಯೇ, ಏನು ಬೇಕು, ಕೇಳಿ; ನಾನು ಆಗದು ಎನ್ನುವುದಿಲ್ಲ,” ಎಂದನು.</verse>
				<verse number="21">ಆಕೆ, “ಶೂನೇಮ್ಯಳಾದ ಅಬೀಷಗಳು ನಿನ್ನ ಅಣ್ಣ ಅದೋನೀಯನಿಗೆ ಹೆಂಡತಿಯಾಗಲು ಅಪ್ಪಣೆಯಾಗಲಿ,” ಎಂದಳು.</verse>
				<verse number="22">ಆಗ ಅರಸ ಸೊಲೊಮೋನನು ತನ್ನ ತಾಯಿಗೆ, “ಅದೋನೀಯನಿಗಾಗಿ ಶೂನೇಮ್ಯಳಾದ ಅಬೀಷಗಳನ್ನು ಮಾತ್ರ ಕೇಳುವುದೇಕೆ? ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು; ಅವನು ನನ್ನ ಅಣ್ಣನಲ್ಲವೇ? ಯಾಜಕ ಎಬ್ಯಾತಾರನೂ ಚೆರೂಯಳ ಮಗ ಯೋವಾಬನೂ ಅವನ ಪಕ್ಷದವರಾಗಿದ್ದಾರೆ,” ಎಂದು ಉತ್ತರಕೊಟ್ಟನು.</verse>
				<verse number="23">ಇದಲ್ಲದೆ, ಅರಸ ಸೊಲೊಮೋನನು, “ಸರ್ವೇಶ್ವರನಾಣೆ, ಅದೋನೀಯನ ಈ ಮಾತಿನ ನಿಮಿತ್ತ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದುದನ್ನು ಮಾಡಲಿ!</verse>
				<verse number="24">ನನ್ನ ತಂದೆ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕುಳ್ಳಿರಿಸಿ, ಅಭಿವೃದ್ಧಿಗೊಳಿಸಿ, ತಾವು ವಾಗ್ದಾನ ಮಾಡಿದಂತೆ ನನಗೆ ಮನೆತನವನ್ನು ಕಟ್ಟಿದ ಸರ್ವೇಶ್ವರನಾಣೆ, ಅದೋನೀಯನು ಈ ದಿನವೇ ಸಾಯಬೇಕು,” ಎಂದು ಹೇಳಿದನು.</verse>
				<verse number="25">ಅಂತೆಯೇ ಯೆಹೋಯಾದಾವನ ಮಗ ಬೆನಾಯನಿಗೆ ಆಜ್ಞಾಪಿಸಿದನು. ಅವನು ಹೋಗಿ ಅದೋನೀಯನನ್ನು ಹೊಡೆದು ಕೊಂದುಹಾಕಿದನು.</verse>
				<verse number="26">ಬಳಿಕ ಅರಸ ಸೊಲೊಮೋನನು ಯಾಜಕನಾದ ಎಬ್ಯಾತಾರನಿಗೆ, “ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು; ನೀನು ಮರಣಕ್ಕೆ ಪಾತ್ರನು. ಆದರೆ ನೀನು ಸ್ವಾಮಿ ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆ ದಾವೀದನೊಡನೆ ಸಂಚರಿಸುತ್ತಾ ಅವರ ಕಷ್ಟ-ದುಃಖಗಳಲ್ಲಿ ಪಾಲುಗಾರನಾಗಿದ್ದುದರಿಂದ</verse>
				<verse number="27">ಈ ದಿನ ನಿನ್ನನ್ನು ಕೊಲ್ಲಿಸುವುದಿಲ್ಲ,” ಎಂದು ಹೇಳಿದನು. ಆದರೆ ಅವನನ್ನು ಸರ್ವೇಶ್ವರನ ಯಾಜಕವೃತ್ತಿಯಿಂದ ತೆಗೆದುಬಿಟ್ಟನು. ಹೀಗೆ ಸರ್ವೇಶ್ವರ ಶಿಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಭವಿಷ್ಯ ಹೇಳಿದ ಮಾತು ನೆರವೇರಿತು.</verse>
				<verse number="28">ಈ ಸುದ್ದಿ ಯೋವಾಬನಿಗೆ ಮುಟ್ಟಿತು. ಅವನು ಕೂಡಲೆ ಸರ್ವೇಶ್ವರನ ಗುಡಾರಕ್ಕೆ ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದುಕೊಂಡನು. (ಅವನು ಅಬ್ಷಾಲೋಮನ ವಿರೋಧವಾಗಿದ್ದರೂ ಅದೋನೀಯನಿಗೆ ಪರವಾಗಿದ್ದನು.)</verse>
				<verse number="29">ಯೋವಾಬನು ಸರ್ವೇಶ್ವರನ ಗು಼ಡಾರಕ್ಕೆ ಓಡಿಹೋಗಿ ಬಲಿಪೀಠದ ಹತ್ತಿರ ಇದ್ದಾನೆ ಎಂಬ ಸುದ್ದಿ ಅರಸ ಸೊಲೊಮೋನನಿಗೆ ತಲುಪಿತು. ಅವನು ಯೆಹೋಯಾದಾವನ ಮಗ ಬೆನಾಯನಿಗೆ, “ಹೋಗಿ ಅವನನ್ನು ಕೊಂದುಹಾಕು,” ಎಂದು ಆಜ್ಞಾಪಿಸಿದನು.</verse>
				<verse number="30">ಬೆನಾಯನು ಸರ್ವೇಶ್ವರನ ಗುಡಾರಕ್ಕೆ ಹೋಗಿ ಯೋವಾಬನಿಗೆ, “ನೀನು ಹೊರಗೆ ಬರಬೇಕೆಂದು ಅರಸರು ಆಜ್ಞಾಪಿಸುತ್ತಾರೆ,” ಎಂದನು. ಆದರೆ ಅವನು, “ಬರುವುದಿಲ್ಲ, ನಾನು ಇಲ್ಲಿಯೇ ಸಾಯುತ್ತೇನೆ,” ಎಂದು ಉತ್ತರಕೊಟ್ಟನು. ಬೆನಾಯನು ಅರಸನ ಬಳಿಗೆ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.</verse>
				<verse number="31">ಅರಸನು, “ಅವನು ಹೇಳಿದಂತೆ ಮಾಡು; ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದುದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.</verse>
				<verse number="32">ಸರ್ವೇಶ್ವರ ಈ ರಕ್ತ ಅಪರಾಧವನ್ನು ಅವನ ತಲೆಯ ಮೇಲೆಯೇ ಬರಮಾಡಲಿ; ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಅಂದರೆ, ಇಸ್ರಯೇಲ್ ಸೇನಾಪತಿಯೂ ನೇರನ ಮಗನೂ ಆದ ಅಬ್ನೇರನನ್ನೂ ಯೆಹೂದ ಸೇನಾಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕೊಂದನಲ್ಲವೆ?</verse>
				<verse number="33">ಈ ಇಬ್ಬರನ್ನೂ ವಧಿಸಿದ ಪಾಪವು ಯೋವಾಬನ ತಲೆಯ ಮೇಲೂ ಅವನ ಸಂತಾನದವರ ತಲೆಯ ಮೇಲೂ ಇರಲಿ; ಆದರೆ ದಾವೀದನಿಗೂ ಅವನ ಸಿಂಹಾಸನವನ್ನೇರುವ ಸಂತಾನದವರಿಗೂ ಸರ್ವೇಶ್ವರನಿಂದ ನಿತ್ಯಸೌಭಾಗ್ಯ ದೊರಕಲಿ!” ಎಂದನು.</verse>
				<verse number="34">ಯೆಹೋಯಾದಾವನ ಮಗ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವಕ್ಕೆ ಮರುಭೂಮಿಯಲ್ಲಿ ಇದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಯಾಯಿತು.</verse>
				<verse number="35">ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿ ಹಾಗು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿ ನೇಮಿಸಿದನು.</verse>
				<verse number="36">ತರುವಾಯ ಅರಸನು ಶಿಮ್ಮಿಯನ್ನು ಕರೆಯಿಸಿ, “ನೀನು ಒಂದು ಮನೆಯನ್ನು ಕಟ್ಟಿಸಿಕೊಂಡು ಜೆರುಸಲೇಮಿನಲ್ಲೇ ವಾಸಿಸಬೇಕು. ಇದನ್ನು ಬಿಟ್ಟು ಎಲ್ಲಿಗೂ ಹೋಗಬಾರದು.</verse>
				<verse number="37">ನೀನು ಇದನ್ನು ಬಿಟ್ಟು ಕಿದ್ರೋನ್ ಹಳ್ಳದ ಆಚೆಗೆ ಹೋದೆಯಾದರೆ, ಅದೇ ದಿವಸ ನಿನಗೆ ಮರಣಶಿಕ್ಷೆಯಾಗುವುದೆಂದು ತಿಳಿದುಕೋ; ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವುದು,” ಎಂದು ಹೇಳಿದನು.</verse>
				<verse number="38">ಅದಕ್ಕೆ ಶಿಮ್ಮಿಯು, “ಒಳ್ಳೆಯದು; ನನ್ನ ಒಡೆಯರೂ ಅರಸರೂ ಆದ ನೀವು ಹೇಳಿದಂತೆಯೇ ಸೇವಕನಾದ ನಾನು ಮಾಡುವೆನು,” ಎಂದು ಉತ್ತರಕೊಟ್ಟು ಬಹಳ ದಿನಗಳವರೆಗೆ ಜೆರುಸಲೇಮಿನಲ್ಲೇ ವಾಸಿಸುತ್ತಿದ್ದನು.</verse>
				<verse number="39">ಮೂರು ವರ್ಷಗಳಾದನಂತರ ಶಿಮ್ಮಿಯ ಇಬ್ಬರು ಗುಲಾಮರು, ಗತ್ ಊರಿನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ಗುಲಾಮರು ಗತ್ ಊರಿನಲ್ಲಿ ಇರುವುದು ಶಿಮ್ಮಿಗೆ ಗೊತ್ತಾಯಿತು.</verse>
				<verse number="40">ಅವನು ಕತ್ತೆಗೆ ತಡಿಹಾಕಿಸಿ ತನ್ನ ಗುಲಾಮರನ್ನು ಹುಡುಕುವುದಕ್ಕಾಗಿ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಹೋಗಿ ಅವರನ್ನು ಗತ್ ಊರಿನಿಂದ ಹಿಡಿದುಕೊಂಡು ಬಂದನು.</verse>
				<verse number="41">ಶಿಮ್ಮಿ ಜೆರುಸಲೇಮಿನಿಂದ ಗತ್ ಊರಿಗೆ ಹೋಗಿ ಬಂದದ್ದು ಅರಸ ಸೊಲೊಮೋನನಿಗೆ ತಿಳಿಯಿತು. ಅವನು ಶಿಮ್ಮಿಯನ್ನು ಕರೆಯಿಸಿ,</verse>
				<verse number="42">“ನೀನು ಈ ಊರನ್ನು ಬಿಟ್ಟು ಎಲ್ಲಿಗಾದರು ಹೋದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವುದೆಂದು ಖಂಡಿತವಾಗಿ ಹೇಳಿ ಸರ್ವೇಶ್ವರನ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ತೆಗೆದುಕೊಂಡನಲ್ಲವೆ? ಆಗ ನೀನು, ‘ಒಳ್ಳೆಯದು, ಹಾಗೆಯೇ ಮಾಡುತ್ತೇನೆ,’ ಎಂದು ಹೇಳಿದೆಯಲ್ಲವೆ?</verse>
				<verse number="43">ಹಾಗಾದರೆ, ಸರ್ವೇಶ್ವರನ ಹೆಸರಿನಲ್ಲಿ ನೀನು ಮಾಡಿದ ಪ್ರಮಾಣವನ್ನೂ ನಾನು ನಿನಗೆ ಕೊಟ್ಟ ಅಪ್ಪಣೆಯನ್ನೂ ಏಕೆ ಕೈಗೊಳ್ಳಲಿಲ್ಲ?” ಎಂದನು.</verse>
				<verse number="44">ಇದಲ್ಲದೆ, ಅರಸನು ಅವನಿಗೆ, “ನೀನು ನನ್ನ ತಂದೆ ದಾವೀದನಿಗೆ ವಿರುದ್ಧ ಮಾಡಿದ ಪಾಪಕ್ಕೆ ಮನವೇ ಸಾಕ್ಷಿ; ಸರ್ವೇಶ್ವರ ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವರು.</verse>
				<verse number="45">ಆದರೆ ಸೊಲೊಮೋನ ರಾಜನಿಗೆ ಆಶೀರ್ವಾದ ಲಭಿಸಲಿ! ದಾವೀದನ ಸಿಂಹಾಸನ ಸರ್ವೇಶ್ವರನ ಸನ್ನಿಧಿಯಲ್ಲಿ ಸದಾಕಾಲವೂ ಇರಲಿ!” ಎಂದು ಹೇಳಿದನು.</verse>
				<verse number="46">ಬಳಿಕ ಯೆಹೋಯಾದವನ ಮಗ ಬೆನಾಯನಿಗೆ ಅವನನ್ನು ಸಂಹರಿಸಬೇಕೆಂದು ಆಜ್ಞಾಪಿಸಿದನು. ಅಂತೆಯೇ ಇವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರ ಸುಭದ್ರವಾಯಿತು.</verse>
			</chapter>
			<chapter number="3">
				<verse number="1">ಸೊಲೊಮೋನನು ಈಜಿಪ್ಟಿನ ಅರಸ ಫರೋಹನ ಮಗಳನ್ನು ಮದುವೆಮಾಡಿಕೊಂಡು ಅವನ ಅಳಿಯನಾದ. ತನ್ನ ಅರಮನೆಯನ್ನು, ಸರ್ವೇಶ್ವರನ ಮಹಾದೇವಾಲಯವನ್ನು ಹಾಗು ಜೆರುಸಲೇಮಿನ ಸುತ್ತಣ ಗೋಡೆಯನ್ನು ಕಟ್ಟಿಮುಗಿಸುವ ತನಕ ಆಕೆಯನ್ನು ದಾವೀದನಗರದಲ್ಲೇ ಇರಿಸಿಕೊಂಡನು.</verse>
				<verse number="2">ಅಲ್ಲಿಯವರೆಗೂ ಸರ್ವೇಶ್ವರಸ್ವಾಮಿಯ ನಾಮಕ್ಕೋಸ್ಕರ ಆಲಯವೇ ಇರಲಿಲ್ಲ. ಆದುದರಿಂದ ಜನರು ಪೂಜಾಸ್ಥಳಗಳಲ್ಲಿ ಬಲಿಯರ್ಪಣೆ ಮಾಡುತ್ತಿದ್ದರು.</verse>
				<verse number="3">ಸೊಲೊಮೋನನು ಸರ್ವೇಶ್ವರನನ್ನು ಪ್ರೀತಿಸಿ, ತನ್ನ ತಂದೆ ದಾವೀದನ ವಿಧಿಗಳನ್ನು ಕೈಗೊಳ್ಳುತ್ತಿದ್ದರೂ ಆ ಪೂಜಾಸ್ಥಳಗಳಲ್ಲೇ ಬಲಿಯರ್ಪಿಸುತ್ತಿದ್ದನು; ಅಲ್ಲಿಯೇ ಧೂಪಾರತಿ ಎತ್ತುತ್ತಿದ್ದನು.</verse>
				<verse number="4">ಒಮ್ಮೆ ಅರಸ ಸೊಲೊಮೋನನು ಬಲಿಯರ್ಪಿಸುವುದಕ್ಕಾಗಿ ಪೂಜಾಸ್ಥಳಗಳಲ್ಲೇ ಪ್ರಾಮುಖ್ಯವಾದ ಗಿಬ್ಯೋನಿಗೆ ಹೋದನು. ಅಲ್ಲಿನ ಪೀಠದ ಮೇಲೆ ಸಹಸ್ರಬಲಿಗಳನ್ನು ಸಮರ್ಪಿಸಿದಾಗ,</verse>
				<verse number="5">ದೇವರಾದ ಸರ್ವೇಶ್ವರ ಆ ರಾತ್ರಿ ಕನಸಿನಲ್ಲಿ ಅವನಿಗೆ ಕಾಣಿಸಿಕೊಂಡರು; “ನಿನಗೆ ಯಾವ ವರಬೇಕು ಕೇಳಿಕೋ,” ಎಂದು ಹೇಳಿದರು.</verse>
				<verse number="6">ಸೊಲೊಮೋನನು, “ನಿಮಗೆ ಪ್ರಾಮಾಣಿಕನಾಗಿ ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ನೀವು ಮಹಾಕೃಪೆಯನ್ನು ತೋರಿಸಿದಿರಿ; ಆ ಕೃಪೆಯನ್ನು ಮುಂದುವರಿಸುತ್ತಾ ಈಗ ಅವರ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿ ಅದನ್ನು ಸಂಪೂರ್ಣಗೊಳಿಸಿದ್ದೀರಿ.</verse>
				<verse number="7">ನನ್ನ ದೇವರಾದ ಸರ್ವೇಶ್ವರಾ, ನನ್ನ ತಂದೆಗೆ ಬದಲಾಗಿ ನಿಮ್ಮಿಂದ ಅರಸನಾಗಿ ನೇಮಕಗೊಂಡಿರುವ ನಿಮ್ಮ ದಾಸನಾದ ನಾನು ಇನ್ನೂ ಚಿಕ್ಕವನು.</verse>
				<verse number="8">ವ್ಯವಹಾರಜ್ಞಾನ ಇಲ್ಲದವನು; ನಿಮ್ಮ ದಾಸನಾದ ನಾನು ಅಸಂಖ್ಯಾತ ಮಹಾಜನಾಂಗವಾದ ನಿಮ್ಮ ಸ್ವಕೀಯ ಪ್ರಜೆಯ ಮಧ್ಯೆ ಇದ್ದೇನೆ.</verse>
				<verse number="9">ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು.</verse>
				<verse number="10">ಸೊಲೊಮೋನನ ಈ ಬಿನ್ನಹವನ್ನು ಸರ್ವೇಶ್ವರನಾದ ದೇವರು ಮೆಚ್ಚಿದರು.</verse>
				<verse number="11">ಅವರು ಆತನಿಗೆ, “ನೀನು ದೀರ್ಘಾಯುಷ್ಯವನ್ನಾಗಲಿ, ಸಿರಿಸಂಪತ್ತನ್ನಾಗಲಿ, ಶತ್ರುವಿನಾಶವನ್ನಾಗಲಿ ಕೇಳಿಕೊಳ್ಳಲಿಲ್ಲ. ನ್ಯಾಯನಿರ್ಣಯಿಸುವುದಕ್ಕೆ ಬೇಕಾದ ವಿವೇಕವನ್ನು ಬೇಡಿಕೊಂಡೆ.</verse>
				<verse number="12">ಆದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ. ನೋಡು, ನಿನಗೆ ಜ್ಞಾನವನ್ನೂ ವಿವೇಕವನ್ನೂ ಅನುಗ್ರಹಿಸಿದ್ದೇನೆ; ನಿನ್ನಂಥ ಜ್ಞಾನಿಯು ಹಿಂದೆ ಇರಲಿಲ್ಲ, ಮುಂದೆಯೂ ಇರುವುದಿಲ್ಲ.</verse>
				<verse number="13">ಇದಲ್ಲದೆ, ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಸಿರಿಸಂಪತ್ತಿನಲ್ಲಿಯೂ ಘನತೆ ಗೌರವದಲ್ಲಿಯೂ ನಿನಗೆ ಸಮಾನವಾದ ಅರಸನು ಇನ್ನೊಬ್ಬನಿರುವುದಿಲ್ಲ.</verse>
				<verse number="14">ನೀನು ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು ನನ್ನ ಆಜ್ಞಾವಿಧಿಗಳನ್ನು ಕೈಗೊಳ್ಳುವುದಾದರೆ ನಿನ್ನ ಆಯುಷ್ಯವನ್ನೂ ಹೆಚ್ಚಿಸುವೆನು,” ಎಂದರು.</verse>
				<verse number="15">ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಕನಸೆಂದು ತಿಳಿದುಕೊಂಡನು. ಅವನು ಜೆರುಸಲೇಮಿಗೆ ಬಂದನಂತರ ಸರ್ವೇಶ್ವರನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ದಹನಬಲಿಗಳನ್ನೂ ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿ, ತನ್ನ ಎಲ್ಲಾ ಪರಿವಾರದವರಿಗೆ ಔತಣವನ್ನು ಏರ್ಪಡಿಸಿದನು.</verse>
				<verse number="16">ಒಂದು ದಿನ ಇಬ್ಬರು ವೇಶ್ಯೆಯರು ಅರಸನ ಸನ್ನಿಧಿಗೆ ಬಂದರು.</verse>
				<verse number="17">ಅವರಲ್ಲಿ ಒಬ್ಬಳು ಅರಸನಿಗೆ, “ಒಡೆಯಾ, ಕೇಳಿ; ನಾನೂ ಇವಳೂ ಒಂದೇ ಮನೆಯಲ್ಲಿ ವಾಸಿಸುತ್ತೇವೆ. ಇವಳು ಮನೆಯಲ್ಲಿದ್ದಾಗಲೇ ನಾನು ಒಂದು ಮಗವನ್ನು ಹೆತ್ತೆ.</verse>
				<verse number="18">ಮೂರನೆಯ ದಿನದಲ್ಲಿ ಇವಳೂ ಹೆತ್ತಳು. ನಾವಿಬ್ಬರೂ ಒಟ್ಟಿಗೆ ಇದ್ದೆವು; ನಮ್ಮಿಬ್ಬರ ಹೊರತು ಆ ಮನೆಯಲ್ಲಿ ಯಾರೂ ಇರಲಿಲ್ಲ.</verse>
				<verse number="19">ಇವಳು ರಾತ್ರಿಯಲ್ಲಿ ತನ್ನ ಕೂಸಿನ ಮೇಲೆ ಹೊರಳಿದ್ದರಿಂದ ಅದು ಸತ್ತಿತು.</verse>
				<verse number="20">ಮಧ್ಯರಾತ್ರಿಯಲ್ಲಿ ಇವಳೆದ್ದು, ನಿಮ್ಮ ಸೇವಕಳಾದ ನಾನು ಗಾಢನಿದ್ರೆಯಲ್ಲಿದ್ದಾಗ, ನನ್ನ ಮಗುವನ್ನು ನನ್ನ ಬಳಿಯಿಂದ ತೆಗೆದು ತನ್ನ ಮಗ್ಗುಲಲ್ಲಿ ಇಟ್ಟುಕೊಂಡಳು. ಸತ್ತುಹೋದ ತನ್ನ ಮಗುವನ್ನು ನನ್ನ ಮಗ್ಗುಲಲ್ಲಿಟ್ಟಳು.</verse>
				<verse number="21">ನಾನು ಬೆಳಿಗ್ಗೆ ಎದ್ದು ಮಗುವಿಗೆ ಮೊಲೆಕುಡಿಸಬೇಕೆಂದಿರುವಾಗ ಅದು ಸತ್ತಿತ್ತು. ಆದರೆ ಅದನ್ನು ಬೆಳಕಿನಲ್ಲಿ ನೋಡಿದಾಗ ಅದು ನಾನು ಹೆತ್ತ ಕೂಸಾಗಿರಲಿಲ್ಲ,” ಎಂದು ಹೇಳಿದಳು.</verse>
				<verse number="22">ಆಗ ಎರಡನೆಯವಳು, “ಹಾಗಲ್ಲ, ಬದುಕಿರುವವನು ನನ್ನ ಮಗ; ಸತ್ತಿರುವವನು ನಿನ್ನ ಮಗ,” ಎಂದು ನುಡಿದಳು. ಮೊದಲನೆಯವಳು ಮತ್ತೆ, “ಇಲ್ಲ ಸತ್ತಿರುವವನು ನಿನ್ನ ಮಗ ಬದುಕಿರುವವನು ನನ್ನ ಮಗ,” ಎಂದಳು. ಹೀಗೆ ಅವರು ಅರಸನ ಮುಂದೆ ವಾದಿಸುತ್ತಾ ಇದ್ದರು.</verse>
				<verse number="23">ಆಗ ಅರಸನು, “ಜೀವದಿಂದಿರುವ ಕೂಸು ನನ್ನದು, ಸತ್ತಿರುವುದು ನಿನ್ನದು,’ ಎಂದು ಒಬ್ಬಳು ಹೇಳುತ್ತಾಳೆ; ಇನ್ನೊಬ್ಬಳು, ‘ಇಲ್ಲ, ಸತ್ತಿರುವುದು ನಿನ್ನದು, ಜೀವದಿಂದಿರುವುದು ನನ್ನದು,’ ಎನ್ನುತ್ತಾಳೆ.</verse>
				<verse number="24">ನನಗೊಂದು ಕತ್ತಿಯನ್ನು ತಂದುಕೊಡಿ,” ಎಂದು ಸೇವಕರಿಗೆ ಹೇಳಿದನು.</verse>
				<verse number="25">ಅವರು ತಂದರು. ಅರಸನು ಅವರಿಗೆ, “ಜೀವದಿಂದಿರುವ ಕೂಸನ್ನು ಕಡಿದು, ಎರಡು ಭಾಗಮಾಡಿ, ಅರ್ಧವನ್ನು ಅವಳಿಗೂ ಅರ್ಧವನ್ನು ಇವಳಿಗೂ ಕೊಡಿ,” ಎಂದು ಅಪ್ಪಣೆಮಾಡಿದನು.</verse>
				<verse number="26">ಆಗ, ಜೀವದಿಂದಿದ್ದ ಕೂಸಿನ ನಿಜವಾದ ತಾಯಿಗೆ ಕೂಸಿನ ವಿಷಯದಲ್ಲಿ ಕರುಳುಕರಗಿತು; “ನನ್ನೊಡೆಯಾ, ಬೇಡಿ; ಬದುಕಿರುವ ಕೂಸನ್ನು ಅವಳಿಗೇ ಕೊಟ್ಟುಬಿಡಿ; ಅದನ್ನು ಕೊಲ್ಲಿಸಬೇಡಿ,” ಎಂದು ಬೇಡಿಕೊಂಡಳು; ಎರಡನೆಯವಳು, “ಅದು ನನಗೂ ಬೇಡ, ನಿನಗೂ ಬೇಡ, ಕಡಿಯಲಿ,” ಎಂದು ಕೂಗಿದಳು.</verse>
				<verse number="27">ಕೂಡಲೆ ಅರಸನು, “ಬದುಕಿರುವ ಕೂಸನ್ನು ಕೊಲ್ಲಬೇಡಿ, ಅದನ್ನು ಆ ಸ್ತ್ರೀಗೆ ಕೊಡಿ; ಅವಳೇ ಅದರ ತಾಯಿ,” ಎಂದು ಆಜ್ಞಾಪಿಸಿದನು.</verse>
				<verse number="28">ಇಸ್ರಯೇಲರೆಲ್ಲರೂ ಅರಸನ ಈ ತೀರ್ಪನ್ನು ಕೇಳಿದರು. ನ್ಯಾಯನಿರ್ಣಯಿಸುವುದಕ್ಕೆ ಈತನಲ್ಲಿ ದೇವದತ್ತ ಜ್ಞಾನವಿದೆ ಎಂದು ತಿಳಿದು ಅವನ ಬಗ್ಗೆ ಅಪಾರ ಗೌರವ ಉಳ್ಳವರಾದರು.</verse>
			</chapter>
			<chapter number="4">
				<verse number="1">ಸೊಲೊಮೋನರಾಜನು ಸರ್ವ ಇಸ್ರಯೇಲರ ಮೇಲೆ ಅರಸನಾಗಿದ್ದನು.</verse>
				<verse number="2">ಅವನ ಮುಖ್ಯ ಪದಾಧಿಕಾರಿಗಳು ಇವರು: ಚಾದೋಕನ ಮಗ ಅಜರ್ಯನು - ಯಾಜಕನು;</verse>
				<verse number="3">ಶೀಷನ ಮಕ್ಕಳಾದ ಎಲೀಹೋರೆಫ್ ಹಾಗು ಅಹೀಯಾಹು ಎಂಬುವರು ಕಾರ್ಯದರ್ಶಿಗಳು; ಅಹೀಲೂದನ ಮಗ ಯೆಹೋಷಾಫಾಟನು ಅವನ ಮಂತ್ರಿ;</verse>
				<verse number="4">ಯೆಹೋಯಾದಾವನ ಮಗ ಬೆನಾಯನು - ಸೇನಾಪತಿ; ಎಬ್ಯಾತಾರ ಹಾಗು ಚಾದೋಕ - ಯಾಜಕರು;</verse>
				<verse number="5">ನಾತಾನನ ಮಗ ಅಜರ್ಯನು - ಪ್ರದೇಶಾಧಿಪತಿಗಳ ಮುಖ್ಯಸ್ಥ; ನಾತಾನನ ಮಗ ಜಾಬೂದನು ಯಾಜಕ ಹಾಗು ಅರಸನ ಮಿತ್ರ;</verse>
				<verse number="6">ಅಹೀಷಾರನು - ರಾಜ್ಯಗೃಹಾಧಿಪತಿ; ಅಬ್ದನ ಮಗನಾದ ಅದೋನೀರಾಮನು - ಬಿಟ್ಟೀ ಕೆಲಸಮಾಡಿಸುವವರ ಮುಖ್ಯಸ್ಥ.</verse>
				<verse number="7">ಸರ್ವ ಇಸ್ರಯೇಲರ ಮೇಲೆ ಸೊಲೊಮೋನನು ಹನ್ನೆರಡು ಜನ ಜಿಲ್ಲಾಧಿಕಾರಿಗಳನ್ನು ನೇಮಿಸಿದ್ದನು. ಅವರು ತಮ್ಮ ಜಿಲ್ಲೆಗಳಿಂದ ಅರಸನಿಗೂ ಅರಮನೆಯವರಿಗೂ ಬೇಕಾದ ಆಹಾರ ಪದಾರ್ಥಗಳನ್ನು ಪೂರೈಸುತ್ತಿದ್ದರು. ಪ್ರತಿಯೊಬ್ಬನೂ ವರ್ಷದಲ್ಲಿ ಒಂದೊಂದು ತಿಂಗಳು ಪೂರೈಸಬೇಕಾಗಿತ್ತು.</verse>
				<verse number="8">ಅವರ ಹೆಸರುಗಳು ಹಾಗು ಜಿಲ್ಲೆಗಳ ಹೆಸರುಗಳು ಇವು:</verse>
				<verse number="9">ಬಿನ್ಹೂರ - ಎಫ್ರಯಿಮಿನ ಮಲೆನಾಡಿನ ಪ್ರದೇಶ;</verse>
				<verse number="10">ಬಿನ್ ದೆಕೆರ್ - ಮಾಕಚ್, ಶಾಲ್ಬೀಮ್, ಬೀತ್ ಷೆಮೆಷ್, ಏಲೋನ್, ಬೇತ್ ಹಾನಾನ್;</verse>
				<verse number="11">ಬಿನ್ ಹೆಸೆದ್ - ಅರುಬ್ಬೋತ್ (ಸೋಕೋಹೇಫೆರ್ ಎಂಬ ಪ್ರದೇಶಗಳು ಅವನ ವಶದಲ್ಲಿದ್ದವು).</verse>
				<verse number="12">ಬಿನ್ ಅಬೀನಾದಾಬ್ - ನಾಪೋತ್ ದೋರ್ (ಇವನು ಸೊಲೊಮೋನನ ಮಗಳು ಟಾಫತಳನ್ನು ವಿವಾಹವಾಗಿದ್ದನು);</verse>
				<verse number="13">ಅಹೀಲೂದನ ಮಗ ಬಾಣಾ - ತಾಣಕ್, ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿರುವ ಜೆಸ್ರೀಲಿನ ಅಡಿಯಲ್ಲಿದ್ದ ಬೇತ್‍ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇದ್ದ, ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿದ್ದ ಬೇತ್‍ಷೆಯಾನಿನ ಎಲ್ಲಾ ಪ್ರದೇಶ;</verse>
				<verse number="14">ಬಿನ್ ಗೆಬೆರ್ - ರಾಮೋತ್ ಗಿಲ್ಯಾದ್ (ಗಿಲ್ಯಾದಿನಲ್ಲಿ ಮನಸ್ಸೆಯ ಮಗ ಯಾಯೀರನ ಗ್ರಾಮಗಳಿಗೂ ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರವತ್ತು ಪಟ್ಟಣಗಳಿದ್ದ ಅರ್ಗೋಬ ಪ್ರದೇಶ); ಇದ್ದೋವಿನ ಮಗ ಅಹೀನಾದಾಬನು - ಮಹನಯಿಮ್;</verse>
				<verse number="15">ಅಹೀಮಾಚ - ನಫ್ತಾಲಿ ಪ್ರದೇಶ (ಇವನು ಸೊಲೊಮೋನನ ಮಗಳು ಬಾಸೆಮತಳನ್ನು ವಿವಾಹವಾಗಿದ್ದನು);</verse>
				<verse number="16">ಹೂಷೈಯ ಮಗ ಬಾಣ - ಅಶೇರ ಹಾಗು ಅಲೋತ್;</verse>
				<verse number="17">ಫಾರೂಹನ ಮಗ ಯೆಹೋಷಾಫಾಟನು - ಇಸ್ಸಾಕಾರ ಪ್ರದೇಶ;</verse>
				<verse number="18">ಏಲನ ಮಗ ಶಿಮ್ಮಿ - ಬೆನ್ಯಾಮೀನರ ಪ್ರದೇಶ;</verse>
				<verse number="19">ಉರಿಯನ ಮಗ ಗೆಬೆರ್ - ಗಿಲ್ಯಾದ (ಅಮೋರಿಯರ ಅರಸ ಸೀಹೋನ್, ಬಾಷಾನಿನ ಅರಸ ಓಗ್ ಇವರ ಪ್ರದೇಶ) ಪ್ರದೇಶಕ್ಕೆಲ್ಲಾ ಅವನೊಬ್ಬನೇ ಜಿಲ್ಲಾಧಿಕಾರಿಯಾಗಿದ್ದನು.</verse>
				<verse number="20">ಇಸ್ರಯೇಲ್ ಹಾಗು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾದರು; ಅನ್ನ ಪಾನಗಳಲ್ಲಿ ಸಂತೃಪ್ತರಾಗಿ ಸಂತೋಷದಿಂದ ಬಾಳುತ್ತಿದ್ದರು.</verse>
				<verse number="21">ಯೂಫ್ರೆಟಿಸ್ ನದಿ ಮೊದಲ್ಗೊಂಡು ಫಿಲಿಷ್ಟಿಯರ ಮತ್ತು ಈಜಿಪ್ಟಿಯರ ದೇಶಗಳವರೆಗೂ ಇರುವ ಎಲ್ಲ ರಾಜ್ಯಗಳ ಪ್ರಜೆಗಳನ್ನು ಸೊಲೊಮೋನನು ಆಳುತ್ತಿದ್ದನು. ಆ ದೇಶದವರು, ತಮ್ಮ ಜೀವಮಾನದಲ್ಲೆಲ್ಲಾ ಅಧೀನರಾಗಿದ್ದು, ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.</verse>
				<verse number="22">ಸೊಲೊಮೋನನ ಅರಮನೆಗೆ ದಿನಂಪ್ರತಿ ಬೇಕಾಗಿದ್ದ ಆಹಾರಪದಾರ್ಥಗಳ ಪಟ್ಟಿ: ಐದು ಸಾವಿರ ಲೀಟರ್ ಗೋದಿಯ ಹಿಟ್ಟು, ಹತ್ತು ಸಾವಿರ ಲೀಟರ್ ಜವೆಗೋದಿಯ ಹಿಟ್ಟು;</verse>
				<verse number="23">ಹತ್ತು ಕಟ್ಟಿ ಮೇಯಿಸಿದ ಎತ್ತುಗಳು, ಇಪ್ಪತ್ತು ಬಿಟ್ಟು ಮೇಯಿಸಿದ ಎತ್ತುಗಳು, ನೂರು ಕುರಿಗಳು; ಇವುಗಳ ಜೊತೆಗೆ, ದುಪ್ಪಿ, ಜಿಂಕೆ, ಸಾರಂಗ, ಕೊಬ್ಬಿದ ಕೋಳಿಗಳು.</verse>
				<verse number="24">ಅವನು ಯೂಫ್ರೆಟಿಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲ್ಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ರಾಜರಿಗೂ ಅಧಿಪತಿಯಾಗಿದ್ದನು. ಸುತ್ತಮುತ್ತಲಿನ ರಾಜರೊಡನೆ ಶಾಂತಿಸಮಾಧಾನದಿಂದಿದ್ದನು.</verse>
				<verse number="25">ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣದಿಂದ ಬೇರ್ಷೆಬದವರೆಗಿರುವ ಸಮಸ್ತ ಇಸ್ರಯೇಲರು ಹಾಗು ಯೆಹೂದ್ಯರು ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದಗಿಡ, ಇವುಗಳ ನೆರಳಿನಲ್ಲಿ ವಾಸಿಸುತ್ತಾ ಸುರಕ್ಷಿತರಾಗಿದ್ದರು.</verse>
				<verse number="26">ಸೊಲೊಮೋನನ ಲಾಯಗಳಲ್ಲಿ ನಾಲ್ವತ್ತು ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು; ಅವನಿಗೆ ಹನ್ನೆರಡು ಸಾವಿರ ಮಂದಿ ರಾಹುತರಿದ್ದರು.</verse>
				<verse number="27">ಮೇಲೆ ಹೇಳಿದ ಜಿಲ್ಲಾಧಿಕಾರಿಗಳು ತಮತಮಗೆ ನೇಮಕವಾದ ತಿಂಗಳಲ್ಲಿ ಅರಸ ಸೊಲೊಮೋನನಿಗೂ ಅವನ ಪಂಕ್ತಿಯಲ್ಲಿ ಊಟಕ್ಕೆ ಕುಳಿತುಕೊಳ್ಳುತ್ತಿದ್ದ ಎಲ್ಲರಿಗೂ ಬೇಕಾಗುವ ಆಹಾರ ಪದಾರ್ಥಗಳನ್ನು ಯಾವ ಕೊರತೆಯೂ ಇಲ್ಲದೆ ಒದಗಿಸುತ್ತಿದ್ದರು.</verse>
				<verse number="28">ಇದಲ್ಲದೆ, ಅವರು ರಥಾಶ್ವಗಳಿಗಾಗಿ ಹಾಗು ಸವಾರಿಕುದುರೆಗಳಿಗಾಗಿ ನೇಮಕವಾದಷ್ಟು ಜವೆಗೋದಿಯನ್ನೂ ಹುಲ್ಲನ್ನೂ ಕುದುರೆಗಳಿದ್ದ ಸ್ಥಳಕ್ಕೆ ತಂದು ಒಪ್ಪಿಸುತ್ತಿದ್ದರು.</verse>
				<verse number="29">ದೇವರು ಸೊಲೊಮೋನನಿಗೆ ಸಮುದ್ರತೀರದ ಮರಳಿನಷ್ಟು ಅಪರಿಮಿತವಾದ ಜ್ಞಾನವಿವೇಕಗಳನ್ನೂ ಮನೋವಿಶಾಲತೆಯನ್ನೂ ಅನುಗ್ರಹಿಸಿದ್ದರು.</verse>
				<verse number="30">ಅವನ ಜ್ಞಾನ ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲು, ಈಜಿಪ್ಟರ ಸರ್ವಜ್ಞಾನಕ್ಕಿಂತಲು ಮಿಗಿಲಾಗಿತ್ತು.</verse>
				<verse number="31">ಅವನು ಜೆರಹನ ಮಗನಾದ ಏತಾನ್, ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದ ಮೊದಲಾದ ಎಲ್ಲರಿಗಿಂತಲೂ ಜ್ಞಾನಿಯಾಗಿದ್ದನು. ಸುತ್ತಮುತ್ತಲಿನ ಜನಾಂಗಗಳಲ್ಲೆಲ್ಲಾ ಅವನ ಹೆಸರು ಪ್ರಸಿದ್ಧವಾಯಿತು.</verse>
				<verse number="32">ಅವನು ನುಡಿದ ಜ್ಞಾನೋಕ್ತಿಗಳು ಮೂರು ಸಾವಿರ, ರಚಿಸಿದ ಗೀತೆಗಳು ಸಾವಿರದ ಐದು.</verse>
				<verse number="33">ಅವನು, ಲೆಬನೋನಿನ ದೇವದಾರುವೃಕ್ಷ ಮೊದಲ್ಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನು ಕುರಿತು, ಎಲ್ಲಾ ಪಶುಪಕ್ಷಿ, ಜಲಜಂತು, ಕ್ರಿಮಿಕೀಟಗಳನ್ನು ಕುರಿತು ಪ್ರಸ್ತಾಪಿಸಬಲ್ಲವನಾಗಿದ್ದನು.</verse>
				<verse number="34">ಸೊಲೊಮೋನನ ಜ್ಞಾನವಿಶೇಷವನ್ನು ಕುರಿತು ಕೇಳಿದ ಸರ್ವಜನಾಂಗಗಳ ಭೂಪಾಲರಲ್ಲಿ ಅನೇಕರು ಅವನ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಬರುತ್ತಿದ್ದರು.</verse>
			</chapter>
			<chapter number="5">
				<verse number="1">ದಾವೀದನಿಗೆ ಜೀವಮಾನದಲ್ಲೆಲ್ಲಾ ಆಪ್ತಮಿತ್ರನಾಗಿದ್ದ ಟೈರಿನ ಅರಸನಾದ ಹೀರಾಮನು, ಸೊಲೊಮೋನನು ತಂದೆಗೆ ಬದಲಾಗಿ ಪಟ್ಟಾಭಿಷೇಕ ಪಡೆದಿದ್ದಾನೆಂದು ಕೇಳಿ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.</verse>
				<verse number="2">ಸೊಲೊಮೋನನು ದೂತರ ಮುಖಾಂತರ ಹೀರಾಮನಿಗೆ,</verse>
				<verse number="3">“ಸರ್ವೇಶ್ವರಸ್ವಾಮಿಯ ಅನುಗ್ರಹದಿಂದ ನಮ್ಮ ತಂದೆ ದಾವೀದನಿಗೆ ಎಲ್ಲಾ ಶತ್ರುಗಳು ವಶವಾದರು. ಅಲ್ಲಿಯವರೆಗೆ ಅವರು ಸುತ್ತಲೂ ಯುದ್ಧಗಳನ್ನು ನಡೆಸಬೇಕಾಗಿತ್ತು. ಆದ್ದರಿಂದ ತಮ್ಮ ದೇವರಾದ ಸರ್ವೇಶ್ವರನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದರು. ಇದು ನಿಮಗೆ ತಿಳಿದ ವಿಷಯ.</verse>
				<verse number="4">ನನಗಾದರೋ ನನ್ನ ದೇವರಾದ ಸರ್ವೇಶ್ವರ ಎಲ್ಲ ಕಡೆಗಳಲ್ಲೂ ಸಮಾಧಾನವನ್ನು ಅನುಗ್ರಹಿಸಿದ್ದಾರೆ; ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ; ಆಪತ್ತು ವಿಪತ್ತು ದೂರವಾಗಿವೆ.</verse>
				<verse number="5">ಸರ್ವೇಶ್ವರ ನನ್ನ ತಂದೆ ದಾವೀದನಿಗೆ, ‘ನಾನು ನಿನ್ನ ಸ್ಥಾನದಲ್ಲಿ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗ, ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ,’ ಎಂದು ಹೇಳಿದ್ದರು. ಆದುದರಿಂದ ನಾನು ನನ್ನ ದೇವರಾದ ಸರ್ವೇಶ್ವರನಿಗೆ ಒಂದು ಆಲಯವನ್ನು ಕಟ್ಟಬೇಕೆಂದಿರುತ್ತೇನೆ.</verse>
				<verse number="6">ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು; ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಸಿದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲವೆ?” ಎಂದು ಹೇಳಿಸಿದನು.</verse>
				<verse number="7">ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟನು. “ಈ ಮಹಾಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತ ಮಗನನ್ನು ಅನುಗ್ರಹಿಸಿದ ಸರ್ವೇಶ್ವರನಿಗೆ ಸ್ತೋತ್ರವಾಗಲಿ!” ಎಂದು ನುಡಿದನು.</verse>
				<verse number="8">ಇದೂ ಅಲ್ಲದೆ, ಅವನು ಸೊಲೊಮೋನನಿಗೆ, “ನೀನು ಹೇಳಿ ಕಳುಹಿಸಿದ್ದನ್ನು, ಕೇಳಿದೆನು; ದೇವದಾರು ವೃಕ್ಷಗಳನ್ನೂ ತುರಾಯಿಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.</verse>
				<verse number="9">ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ ಸಮುದ್ರಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ ಅಲ್ಲೆ ಬಿಚ್ಚಿಸುವೆನು; ನೀನು ಅವುಗಳನ್ನು ತೆಗೆದುಕೊಂಡು, ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆ,” ಎಂದು ಹೇಳಿಕಳುಹಿಸಿದನು.</verse>
				<verse number="10">ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರಿನ ಮರಗಳನ್ನೂ ತುರಾಯಿಮರಗಳನ್ನೂ ಕೊಡುತ್ತಿದ್ದನು.</verse>
				<verse number="11">ಸೊಲೊಮೋನನಾದರೋ ಪ್ರತಿವರ್ಷ ಅವನ ಮನೆಯವರ ಆಹಾರಕ್ಕಾಗಿ ಎರಡು ಸಾವಿರ ಮೆಟ್ರಿಕ್ ಟನ್ ಗೋದಿಯನ್ನೂ ನಾಲ್ಕು ಸಾವಿರ ಲೀಟರ್ ಅಪ್ಪಟ ಎಣ್ಣೆಯನ್ನೂ ಕೊಡುತ್ತಿದ್ದನು.</verse>
				<verse number="12">ಸರ್ವೇಶ್ವರ ವಾಗ್ದಾನಮಾಡಿದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದ್ದರು. ಸೊಲೊಮೋನನಿಗೂ ಹೀರಾಮನಿಗೂ ಸಮಾಧಾನವಿತ್ತು; ಅವರು ಒಂದು ಒಪ್ಪಂದ ಮಾಡಿಕೊಂಡಿದ್ದರು.</verse>
				<verse number="13">ಅರಸ ಸೊಲೊಮೋನನು, ಇಸ್ರಯೇಲರಲ್ಲಿ ಮೂವತ್ತು ಸಾವಿರ ಮಂದಿಯನ್ನು ಬಿಟ್ಟಿಕೆಲಸಕ್ಕೆಂದು ಹಿಡಿದು,</verse>
				<verse number="14">ಅವರಲ್ಲಿ ತಿಂಗಳೊಂದಕ್ಕೆ ಹತ್ತುಸಾವಿರ ಮಂದಿಯಂತೆ ಲೆಬನೋನಿಗೆ ಕಳುಹಿಸುತ್ತಿದ್ದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದರೆ, ಎರಡು ತಿಂಗಳು ಮನೆಯಲ್ಲಿರುತ್ತಿದ್ದರು. ಅದೋನೀರಾಮನು ಇವರ ಮುಖ್ಯಸ್ಥನಾಗಿದ್ದನು.</verse>
				<verse number="15">ಇದಲ್ಲದೆ, ಸೊಲೊಮೋನನಿಗೆ ಎಪ್ಪತ್ತು ಸಾವಿರಮಂದಿ ಹೊರೆಹೊರುವವರೂ ಎಂಬತ್ತು ಸಾವಿರಮಂದಿ ಕಲ್ಲುಗಣಿಯಲ್ಲಿ ಕೆಲಸಮಾಡುವವರೂ ಇದ್ದರು.</verse>
				<verse number="16">ಈ ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರುಮಂದಿ ಮೇಸ್ತ್ರಿಗಳನ್ನು ನೇಮಿಸಿದ್ದನು.</verse>
				<verse number="17">ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು, ಸೊಲೊಮೋನನ ಅಪ್ಪಣೆಯಂತೆ, ಶ್ರೇಷ್ಠವಾದ ದೊಡ್ಡ ಕಲ್ಲುಗಳನ್ನು ಕೊರೆಯುತ್ತಿದ್ದರು.</verse>
				<verse number="18">ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವುದಕ್ಕೆ ಬೇಕಾದ ಕಲ್ಲು, ಮರಗಳನ್ನು ಸಿದ್ಧಪಡಿಸಿದವರು ಇವರೇ.</verse>
			</chapter>
			<chapter number="6">
				<verse number="1">ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟ ನಾನೂರ ಎಂಬತ್ತನೆಯ ವರ್ಷದಲ್ಲಿ ಅಂದರೆ, ಇಸ್ರಯೇಲರ ಅರಸನಾದ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಾದ ವೈಶಾಖ ಮಾಸದಲ್ಲಿ ಅರಸ ಸೊಲೊಮೋನನು ಸರ್ವೇಶ್ವರಸ್ವಾಮಿಯ ಆಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದನು.</verse>
				<verse number="2">ಅವನು ಸರ್ವೇಶ್ವರನಿಗೆ ಕಟ್ಟಿಸಿದ ದೇವಾಲಯದ ಉದ್ದ 27 ಮೀಟರ್, ಅಗಲ 9 ಮೀಟರ್, ಎತ್ತರ 13:5 ಮೀಟರ್.</verse>
				<verse number="3">ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು; ಅದರ ಉದ್ದಳತೆ ದೇವಾಲಯದ ಅಗಲಕ್ಕೆ ಸರಿಯಾಗಿ 4:5 ಮೀಟರ್, ಅಗಲಳತೆ 9 ಮೀಟರ್.</verse>
				<verse number="4">ಇದಲ್ಲದೆ, ಅವನು ಆಲಯಕ್ಕೆ ತೆರೆಯಲಾಗದ ಜಾಲಂಧರ ಕಿಟಕಿಗಳನ್ನಿಡಿಸಿದನು.</verse>
				<verse number="5">ದೇವಾಲಯದ ಗೋಡೆಯ ಸುತ್ತಲೂ ಅಂದರೆ, ಪರಿಶುದ್ಧಸ್ಥಳ ಹಾಗು ಮಹಾಪರಿಶುದ್ಧಸ್ಥಳ ಇವುಗಳ ಗೋಡೆಯ ಸುತ್ತಲೂ ಇನ್ನೊಂದು ಗೋಡೆಯನ್ನು ಕಟ್ಟಿಸಿ, ಇವುಗಳ ನಡುವೆ ಅಂತಸ್ತುಗಳುಳ್ಳ ಕೊಠಡಿಗಳನ್ನು ಮಾಡಿಸಿದನು.</verse>
				<verse number="6">ಕೆಳಗಿನ ಕೊಠಡಿಗಳ ಅಗಲ 2:2 ಮೀಟರ್; ಮೊದಲನೆಯ ಅಂತಸ್ತಿನ ಕೊಠಡಿಗಳ ಅಗಲ 2:7 ಮೀಟರ್; ಎರಡನೆಯ ಅಂತಸ್ತಿನ ಕೊಠಡಿಗಳ ಅಗಲ 3:1 ಮೀಟರ್. ಅಂತಸ್ತಿನ ತೊಲೆಗಳನ್ನಿಡುವಾಗ ದೇವಾಲಯದ ಗೋಡೆಯಲ್ಲಿ ತೂತಾಗಬಾರದು ಎಂದು ಗೋಡೆಯ ಹೊರ ಮೈಯನ್ನು ಸೋಪಾನಾಕಾರವಾಗಿ ಮಾಡಿಸಿದನು.</verse>
				<verse number="7">ದೇವಾಲಯವನ್ನು ಕಟ್ಟುವಾಗ, ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ, ಕಟ್ಟುವ ದಿವಸಗಳಲ್ಲೆಲ್ಲಾ ಸುತ್ತಿಗೆ, ಉಳಿ, ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವೂ ಕೇಳಿಸಲಿಲ್ಲ.</verse>
				<verse number="8">ಕೆಳಗಿನ ಕೊಠಡಿಗಳಿಗೆ ಹೋಗುವ ಬಾಗಿಲು ಆಲಯದ ಬಲಪಾರ್ಶ್ವದಲ್ಲಿತ್ತು. ಅಲ್ಲಿಂದ ಮೊದಲನೆಯ ಅಂತಸ್ತಿಗೂ ಎರಡನೆಯ ಅಂತಸ್ತಿಗೂ ಹೋಗಬೇಕಾದರೆ ವಕ್ರಸೋಪಾನಗಳಿದ್ದವು.</verse>
				<verse number="9">ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ, ದೇವದಾರಿನ ತೊಲೆ ಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ, ಕೆಲಸ ಮುಗಿಸಿದನು.</verse>
				<verse number="10">ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು 2:2 ಮೀಟರುಗಳಂತೆ ಎತ್ತರವಾದ ಕೊಠಡಿಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಹೊಂದಿಕೊಂಡಿದ್ದವು.</verse>
				<verse number="11">ಸರ್ವೇಶ್ವರಸ್ವಾಮಿ ಸೊಲೊಮೋನನಿಗೆ, “ನೀನು ಈಗ ಒಂದು ಆಲಯವನ್ನು ಕಟ್ಟಿಸುತ್ತಿರುವೆ. ನನ್ನ ನಿಯಮವಿಧಿಗಳನ್ನು ಅನುಸರಿಸಿ ನನ್ನ ಆಜ್ಞೆಗಳನ್ನು ಕೈಗೊಂಡು, ನೀನು ನಡೆಯುವುದಾದರೆ, ನಿನ್ನನ್ನು ಕುರಿತು ನಿನ್ನ ತಂದೆ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.</verse>
				<verse number="12"></verse>
				<verse number="13">ನನ್ನ ಪ್ರಜೆಗಳಾದ ಇಸ್ರಯೇಲರನ್ನು ಕೈಬಿಡದೆ ಅವರ ಮಧ್ಯದಲ್ಲೇ ವಾಸಿಸುವೆನು,” ಎಂದು ಹೇಳಿದರು.</verse>
				<verse number="14">ಹೀಗೆ ಸೊಲೊಮೋನನು ದೇವಾಲಯವನ್ನು ಕಟ್ಟಿಮುಗಿಸಿದನು.</verse>
				<verse number="15">ದೇವಾಲಯದ ಗೋಡೆಗಳ ಒಳಮೈಯನ್ನು ನೆಲದಿಂದ ಮಾಳಿಗೆಯವರೆಗೆ ದೇವದಾರಿನ ಹಲಗೆಗಳಿಂದ ಹೊದಿಸಿದನು. ನೆಲಕ್ಕೆ ತುರಾಯಿಮರದ ಹಲಗೆಗಳನ್ನು ಹಾಕಿಸಿದನು.</verse>
				<verse number="16">ಇದಲ್ಲದೆ, ದೇವಾಲಯದೊಳಗೆ ಹಿಂದಿನ 9 ಮೀಟರ್ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿ ಅದರ ಹಿಂದಿನ ಭಾಗವನ್ನು ಗರ್ಭಗುಡಿ, ಅಥವಾ ಮಹಾಪರಿಶುದ್ಧ ಸ್ಥಳವೆಂದು ಪ್ರತ್ಯೇಕಿಸಿದನು.</verse>
				<verse number="17">ದೇವಾಲಯದ ಪರಿಶುದ್ಧ ಸ್ಥಳವೆನಿಸಿಕೊಳ್ಳುವ ಮುಂದಿನ ಭಾಗ 18 ಮೀಟರ್ ಉದ್ದವಿತ್ತು.</verse>
				<verse number="18">ದೇವಾಲಯದೊಳಗೆ ಕಲ್ಲು ಕಾಣಿಸದಂತೆ, ಗೋಡೆಯನ್ನೆಲ್ಲಾ ಬಳ್ಳಿಗಳೂ ಹೂವುಗಳೂ ಕೆತ್ತಿರುವ ದೇವದಾರಿನ ಹಲಗೆಗಳಿಂದ ಹೊದಿಸಿದನು.</verse>
				<verse number="19">ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಇಡುವುದಕ್ಕಾಗಿ ದೇವಾಲಯದೊಳಗೆ ಒಂದು ಭಾಗವನ್ನು ‘ಗರ್ಭಗುಡಿ’ ಎಂದು ಪ್ರತ್ಯೇಕಿಸಿದನು.</verse>
				<verse number="20">ಆ ಗರ್ಭಗುಡಿ 9 ಮೀಟರ್ ಉದ್ದ, 9 ಮೀಟರ್ ಅಗಲ, 9 ಮೀಟರ್ ಎತ್ತರ ಇತ್ತು. ಅದನ್ನು ಚೊಕ್ಕ ಬಂಗಾರದ ತಗಡಿನಿಂದಲೂ ವೇದಿಯನ್ನು ದೇವದಾರುಮರದಿಂದಲೂ ಹೊದಿಸಿದನು.</verse>
				<verse number="21">ಸೊಲೊಮೋನನು ದೇವಾಲಯದ ಒಳಮೈಯನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು. ಬಂಗಾರದ ತಗಡಿನಿಂದ ಹೊದಿಸಲಾಗಿದ್ದ ಮಹಾಪರಿಶುದ್ಧ ಸ್ಥಳದ ಎದುರಿನಲ್ಲಿ ಒಂದು ಗೋಡೆಯಿಂದ ಇನ್ನೊಂದು ಗೋಡೆಗೆ ಬಂಗಾರದ ಸರಪಣಿಗಳನ್ನು ಕಟ್ಟಿಸಿದನು.</verse>
				<verse number="22">ದೇವಾಲಯದ ಎಲ್ಲಾ ಗೋಡೆಗಳನ್ನೂ ಮಹಾಪರಿಶುದ್ಧ ಸ್ಥಳಕ್ಕೆ ಸೇರಿದ ಪೀಠವನ್ನೂ ಪೂರ್ಣವಾಗಿ ಬಂಗಾರದ ತಗಡಿನಿಂದ ಹೊದಿಸಿದನು.</verse>
				<verse number="23">ಇದಲ್ಲದೆ ಅವನು ಎಣ್ಣೇಮರದಿಂದ 4:4 ಮೀಟರ್ ಎತ್ತರವಾದ ಎರಡು ‘ಕೆರೂಬಿ’ಗಳನ್ನು ಮಾಡಿಸಿ ಅವುಗಳನ್ನು ಗರ್ಭಗುಡಿಯಲ್ಲಿರಿಸಿದನು.</verse>
				<verse number="24">ಪ್ರತಿಯೊಂದು ಕೆರೂಬಿಯ ರೆಕ್ಕೆಗಳು 2:2 ಮೀಟರ್ ಉದ್ದವಿದ್ದವು. ಎರಡು ರೆಕ್ಕೆಗಳ ಅಂತರವು ತುದಿಯಿಂದ ತುದಿಗೆ 4:4 ಮೀಟರ್</verse>
				<verse number="25">ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವೂ 4:4: ಮೀಟರ್. ಎರಡೂ ಕೆರೂಬಿಗಳ ಅಳತೆಯೂ ಆಕಾರವೂ ಒಂದೇ ಆಗಿತ್ತು.</verse>
				<verse number="26">ಅವೆರಡೂ ಒಂದೊಂದು 4:4 ಮೀಟರ್ ಎತ್ತರವಾಗಿದ್ದವು.</verse>
				<verse number="27">ಅವನು ಅವುಗಳನ್ನು ದೇವಾಲಯದ ಗರ್ಭಗುಡಿಯಲ್ಲಿರಿಸಿದನು. ಅವುಗಳ ರೆಕ್ಕೆಗಳು ಚಾಚಿದವುಗಳಾಗಿದ್ದುದರಿಂದ ಮೊದಲನೆಯ ಕೆರೂಬಿಯ ಒಂದು ರೆಕ್ಕೆ ಈಚೆಯ ಗೋಡೆಗೂ ಎರಡನೆಯ ಕೆರೂಬಿಯ ಒಂದು ರೆಕ್ಕೆ ಆಚೆಯ ಗೋಡೆಗೂ ತಗುಲಿದ್ದವು; ಅವುಗಳ ಬೇರೆ ಎರಡು ರೆಕ್ಕೆಗಳು ಮನೆಯ ಮಧ್ಯದಲ್ಲಿ ಒಂದನ್ನೊಂದು ತಗುಲಿ ಇದ್ದವು.</verse>
				<verse number="28">ಈ ಕೆರೂಬಿಗಳು ಬಂಗಾರದ ತಗಡುಗಳಿಂದ ಹೊದಿಸಲ್ಪಟ್ಟಿದ್ದವು.</verse>
				<verse number="29">ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಒಳಗೂ ಕೆರೂಬಿ, ಖರ್ಜೂರವೃಕ್ಷ, ಹೂವು, ಇವುಗಳ ಚಿತ್ರಗಳನ್ನು ಕೆತ್ತಿಸಿದನು.</verse>
				<verse number="30">ದೇವಾಲಯದ ಒಳಗೆ ಮತ್ತು ಹೊರಗಿನ ನೆಲವನ್ನು ಬಂಗಾರದ ತಗಡುಗಳಿಂದ ಹೊದಿಸಿದನು.</verse>
				<verse number="31">ಗರ್ಭಗುಡಿಯ ಬಾಗಿಲಿಗೆ ಎಣ್ಣೇಮರದ ಕದಗಳನ್ನು ಹಚ್ಚಿಸಿದನು. ಚೌಕಟ್ಟು ಪಂಚಕೋನಗಳುಳ್ಳದ್ದಾಗಿತ್ತು.</verse>
				<verse number="32">ಎಣ್ಣೇಮರದ ಆ ಎರಡು ಕದಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ, ಹೂವು, ಇವುಗಳ ಚಿತ್ರಗಳನ್ನು ಕೆತ್ತಿಸಿ, ಕದಗಳಿಗೆ ಬಂಗಾರದ ತಗಡನ್ನು ಹೊದಿಸಿ, ಚಿತ್ರಗಳಿದ್ದಲ್ಲಿ ಆ ತಗಡನ್ನು ಬಡಿಸಿದನು.</verse>
				<verse number="33">ಇದಲ್ಲದೆ, ಪರಿಶುದ್ಧಸ್ಥಳದ ಬಾಗಲಿಗೆ ಎಣ್ಣೇಮರದಿಂದ ಚತುಷ್ಕೋನದ ಚೌಕಟ್ಟನ್ನು ಮಾಡಿಸಿ,</verse>
				<verse number="34">ಅದಕ್ಕೆ ತುರಾಯಿಮರದ ಎರಡು ಕದಗಳನ್ನು ಹಚ್ಚಿಸಿದನು. ಪ್ರತಿಯೊಂದು ಕದವು ಎರಡು ಭಾಗವುಳ್ಳದ್ದಾಗಿ ಮಡಚುವುದಕ್ಕೆ ಬರುತ್ತಿತ್ತು.</verse>
				<verse number="35">ಈ ಕದಗಳಲ್ಲಿ ಕೆರೂಬಿ, ಖರ್ಜೂರವೃಕ್ಷ, ಹೂವು, ಇವುಗಳ ಚಿತ್ರಗಳನ್ನು ಕೆತ್ತಿಸಿ ಅವುಗಳಿಗೆ ಬಂಗಾರದ ತಗಡನ್ನು ಹೊದಿಸಿ ಕೆತ್ತನೆ ಇದ್ದಲ್ಲಿ ಆ ತಗಡನ್ನು ಬಡಿಸಿದನು.</verse>
				<verse number="36">ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ ಒಂದು ಸಾಲು ದೇವದಾರುವಿನ ಕಂಬಗಳನ್ನೂ ಇರಿಸಿದನು.</verse>
				<verse number="37">ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ ವೈಶಾಖ ಮಾಸದಲ್ಲಿ ಸರ್ವೇಶ್ವರನ ಆಲಯಕ್ಕೆ ಅಸ್ತಿವಾರ ಹಾಕಲಾಯಿತು.</verse>
				<verse number="38">ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಅದರ ಎಲ್ಲಾ ಕಟ್ಟಡಗಳೂ ಯೋಜನೆಯ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು.</verse>
			</chapter>
			<chapter number="7">
				<verse number="1">ಸೊಲೊಮೋನನು ತನ್ನ ಅರಮನೆಯನ್ನು ಹದಿಮೂರು ವರ್ಷಗಳಲ್ಲಿ ಕಟ್ಟಿಸಿ ಮುಗಿಸಿದನು.</verse>
				<verse number="2">ಅವನು ಕಟ್ಟಿಸಿದ ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರ 44 ಮೀಟರ್ ಉದ್ದ, 22 ಮೀಟರ್ ಅಗಲ, 13:5 ಮೀಟರ್ ಎತ್ತರವಾಗಿತ್ತು. ಅದರ ಮಾಳಿಗೆಗೆ ದೇವದಾರಿನ ಮೂರು ಸಾಲು ಕಂಬಗಳು ಅವುಗಳ ಮೇಲೆ ಇಡಲಾದ ದೇವದಾರಿನ ತೊಲೆಗಳೂ ಆಧಾರವಾಗಿ ಇದ್ದವು.</verse>
				<verse number="3">ಸ್ತಂಭಗಳ ಮೇಲಿರುವ ತೊಲೆಗಳ ಮೇಲೆ ದೇವದಾರಿನ ಹಲಿಗೆಗಳಿಂದ ಮಾಡಿದ ಮಾಳಿಗೆಯಿತ್ತು. ಸ್ತಂಭಗಳು ಪ್ರತಿಯೊಂದು ಸಾಲಿನಲ್ಲಿ ಹದಿನೈದರಂತೆ ಒಟ್ಟು ನಲ್ವತ್ತೈದು ಇದ್ದವು.</verse>
				<verse number="4">ಬೆಳಕು ಎದುರೆದುರಾಗಿ ಬೀಳುವಂತೆ ಎರಡು ಗೋಡೆಗಳಿಗೆ ಮೂರು ಮೂರು ಸಾಲು ಬೆಳಕುಕಿಂಡಿಗಳಿದ್ದವು.</verse>
				<verse number="5">ಎಲ್ಲಾ ದ್ವಾರಗಳೂ ಬೆಳಕುಕಿಂಡಿಗಳೂ ಚತುಷ್ಕೋನಾಕಾರವುಳ್ಳವುಗಳು. ಮೂರು ಮೂರು ಸಾಲು ಬೆಳಕುಕಿಂಡಿಗಳು ಎದುರೆದುರಾಗಿದ್ದವು.</verse>
				<verse number="6">ಇದಲ್ಲದೆ, ಸೊಲೊಮೋನನು ಒಂದು ಕಂಬಮಂಟಪವನ್ನು ಕಟ್ಟಿಸಿದನು. ಅದರ ಉದ್ದ 22 ಮೀಟರ್; ಅಗಲ 13:5 ಮೀಟರ್, ಅದರ ಮುಂದುಗಡೆಯಲ್ಲಿ ಒಂದು ಪಡಸಾಲೆಯಿತ್ತು; ಆ ಪಡಸಾಲೆಗೆ ಕಂಬಗಳೂ ಮೆಟ್ಟಲುಗಳೂ ಇದ್ದವು.</verse>
				<verse number="7">ಇದಲ್ಲದೆ ಅವನು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಅಲ್ಲಿ ನ್ಯಾಯತೀರಿಸುತ್ತಿದ್ದುದರಿಂದ ಅದಕ್ಕೆ ನ್ಯಾಯಮಂದಿರ ಎಂದು ಹೆಸರಾಯಿತು. ಇದರ ಎಲ್ಲಾ ಗೋಡೆಗಳು ನೆಲದಿಂದ ಮಾಳಿಗೆಯವರೆಗೆ ದೇವದಾರುವಿನ ಹಲಗೆಗಳಿಂದ ಹೊದಿಸಲಾಗಿದ್ದವು.</verse>
				<verse number="8">ನ್ಯಾಯಮಂದಿರದ ಹಿಂದಿನ ಪ್ರಾಕಾರದಲ್ಲಿ ತನಗಾಗಿ ಅರಮನೆಯನ್ನೂ ತನ್ನ ಹೆಂಡತಿಯಾದ ಫರೋಹನ ಮಗಳಿಗಾಗಿ ಇನ್ನೊಂದು ಮನೆಯನ್ನೂ ಕಟ್ಟಿಸಿದನು. ನ್ಯಾಯಮಂದಿರದ ಹಾಗೆಯೇ ಇವುಗಳನ್ನು ಕಟ್ಟಿಸಿದನು.</verse>
				<verse number="9">ಈ ಎಲ್ಲಾ ಮಂದಿರಗಳನ್ನೂ ಅವುಗಳ ಸುತ್ತುಗೋಡೆಯನ್ನೂ ದೊಡ್ಡ ಪ್ರಾಕಾರದ ಸುತ್ತುಗೋಡೆಯನ್ನೂ ಅವುಗಳ ಸುತ್ತುಗೋಡೆಯನ್ನೂ ದೊಡ್ಡ ಪ್ರಾಕಾರದ ಸುತ್ತುಗೋಡೆಯನ್ನೂ ಅಸ್ತಿವಾರದ ಮೇಲಿನಿಂದ ಕಡೇ ವರಸೆಯವರೆಗೆ, ಅಳತೆಯ ಮೇರೆಗೆ ಕೆತ್ತಲ್ಪಟ್ಟಂಥ, ಎರಡು ಮಗ್ಗಲಿಗೂ ಗರಗಸದಿಂದ ಕೊಯ್ಯಲ್ಪಟ್ಟಂಥ, ಶ್ರೇಷ್ಠವಾದ ಕಲ್ಲುಗಳಿಂದ ಕಟ್ಟಿದನು.</verse>
				<verse number="10">ಅಸ್ತಿವಾರಕ್ಕೆ ಪ್ರಯೋಗಿಸಿದ ಶ್ರೇಷ್ಠವಾದ ದೊಡ್ಡಕಲ್ಲುಗಳು ಎಂಟು ಹತ್ತು ಮೊಳ ಉದ್ದವಾಗಿದ್ದವು.</verse>
				<verse number="11">ಅಸ್ತಿವಾರದ ಮೇಲಣ ಭಾಗಕ್ಕೆ ಅಳತೆಯ ಮೇರೆಗೆ ಕೆತ್ತಿದ ಶ್ರೇಷ್ಠವಾದ ಕಲ್ಲುಗಳನ್ನೂ ದೇವದಾರಿನ ಮರವನ್ನೂ ಉಪಯೋಗಿಸಿದರು.</verse>
				<verse number="12">ಒಳಗಣ ಪ್ರಾಕಾರವೆನಿಸಿಕೊಳ್ಳುವ ಸರ್ವೇಶ್ವರನ ಆಲಯದ ಪ್ರಾಕಾರಕ್ಕೂ ಅರಮನೆಯ ಪ್ರಾಕಾರಕ್ಕೂ ಹೇಗೋ ಹಾಗೆಯೇ ಎಲ್ಲಾ ಮಂದಿರಗಳ ಸುತ್ತಲಿರುವ ದೊಡ್ಡ ಪ್ರಾಕಾರಕ್ಕೆ ಮೂರು ಸಾಲು ಕಲ್ಲಿನ ಕಂಬಗಳೂ ಒಂದು ಸಾಲು ದೇವದಾರಿನ ಮರದ ಕಂಬಗಳೂ ಇದ್ದವು.</verse>
				<verse number="13">ಅರಸ ಸೊಲೊಮೋನನು ಟೈರ್ ಪಟ್ಟಣದಿಂದ ಹೀರಾಮ್ ಎಂಬವನನ್ನು ಕರೆಸಿದನು.</verse>
				<verse number="14">ಇವನು ನಫ್ತಾಲಿಕುಲದ ಒಬ್ಬ ವಿಧವೆಯಲ್ಲಿ ಟೈರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ ತಾಮ್ರದ ಕೆಲಸದಲ್ಲಿ ನಿಪುಣನೂ ಅನುಭವಶಾಲಿಯೂ ಆಗಿದ್ದ ಇವನು ಅರಸನ ಬಳಿಗೆ ಬಂದು, ಅವನ ಎಲ್ಲಾ ಕೆಲಸವನ್ನು ಮಾಡಿದನು.</verse>
				<verse number="15">ಅವನು ಎರಡು ಕಂಚಿನ ಕಂಬಗಳನ್ನು ಮಾಡಿದನು. ಅವು 8 ಮೀಟರ್ ಎತ್ತರವಿದ್ದವು. ಅವುಗಳ ಸುತ್ತಳತೆಯು 5:3 ಮೀಟರ್.</verse>
				<verse number="16">ಇದಲ್ಲದೆ ಅವನು ತಾಮ್ರವನ್ನು ಎರಕಹೊಯ್ದು ಕಂಬಗಳ ಮೇಲೆ ಇಡುವುದಕ್ಕಾಗಿ 2:2 ಮೀಟರ್ ಎತ್ತರವಾದ ಎರಡು ಕುಂಭಗಳನ್ನೂ</verse>
				<verse number="17">ಒಂದೊಂದಕ್ಕೆ ಏಳೇಳರಂತೆ ಕುಂಭದ ಮೇಲೆ ಹಾಕುವುದಕ್ಕಾಗಿ ತಾಮ್ರದ ಸರಿಗೆಯ ಜಾಲರಿಗಳನ್ನೂ ಮಾಡಿದನು;</verse>
				<verse number="18">ಇದಲ್ಲದೆ, ಅವನು ತಾಮ್ರದ ದಾಳಿಂಬೆ ಹಣ್ಣುಗಳನ್ನು ಮಾಡಿ, ಅವುಗಳನ್ನು ಕಂಬಗಳ ಮೇಲಣ ಪ್ರತಿಯೊಂದು ಕುಂಭದ ಜಾಲರಿಯ ಸುತ್ತಲೂ ಎರಡೆರಡು ಸಾಲಾಗಿ ಸಿಕ್ಕಿಸಿದನು.</verse>
				<verse number="19">ಕಂಬಗಳ ಮೇಲಿರುವ ಕುಂಭಗಳ ಒಡಲು 1:8 ಮೀಟರ್ ಗಳವರೆಗೆ ಕಮಲಾಕಾರವುಳ್ಳದ್ದಾಗಿತ್ತು.</verse>
				<verse number="20">ಆ ಕುಂಭಗಳ ಮೇಲಿನ ಭಾಗದಲ್ಲಿ ಒಡಲಿನ ಸುತ್ತಲೂ ಜಾಲರಿಯ ಹೊರಗೆ ದಾಳಿಂಬೆಹಣ್ಣಿನ ಆಕಾರವುಳ್ಳ ಗುಂಡುಗಳಿದ್ದವು. ಪ್ರತಿಯೊಂದು ಕುಂಭದ ಸುತ್ತಲೂ ಇನ್ನೂರು ಗುಂಡುಗಳನ್ನು ಸಾಲಾಗಿ ಸಿಕ್ಕಿಸಿದನು.</verse>
				<verse number="21">ತರುವಾಯ ಅವನು ಆ ಎರಡು ಕಂಬಗಳನ್ನೂ ದೇವಾಲಯದ ಮಂಟಪದ ಬಳಿಯಲ್ಲಿ ನಿಲ್ಲಿಸಿ, ಬಲಗಡೆಯ ಕಂಬಕ್ಕೆ ಯಾಕೀನ್ ಎಂದೂ ಎಡಗಡೆಯ ಕಂಬಕ್ಕೆ ಬೋವಜ್ ಎಂದು ಹೆಸರಿಟ್ಟನು.</verse>
				<verse number="22">ಅವನು ಕಂಬಗಳ ಮೇಲೆ ಕಮಲ ಅಲಂಕಾರವನ್ನು ಮಾಡಿ ಅವುಗಳ ಕೆಲಸವನ್ನು ಮುಗಿಸಿದನು.</verse>
				<verse number="23">ಅನಂತರ ಅವನು ‘ಕಡಲು’ ಎನಿಸಿಕೊಳ್ಳುವ ಎರಕದ ಒಂದು ಕೊಳವನ್ನು ಮಾಡಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ 4:4 ಮೀಟರ್ ಉದ್ದ ಇತ್ತು. ಅದರ ಎತ್ತರ 2:2 ಮೀಟರ್, ಸುತ್ತಳತೆ 13:2 ಮೀಟರ್,</verse>
				<verse number="24">ಅದನ್ನು ಎರಕ ಹೊಯ್ಯುವಾಗ ಅದರ ಅಂಚಿನ ಕೆಳಗೆ ಸುತ್ತಲೂ ಹತ್ತತ್ತು ಮೊಳ ಉದ್ದವಾದ ಬಳ್ಳಿಗಳನ್ನು ಎರಡು ಸಾಲಾಗಿ ಎರಕಹೊಯ್ದಿದ್ದನು.</verse>
				<verse number="25">ಹನ್ನೆರಡು ಎರಕದ ಹೋರಿಗಳು ಅದನ್ನು ಹೊತ್ತಿದ್ದವು. ಅವುಗಳಲ್ಲಿ ಮೂರು ಉತ್ತರ ದಿಕ್ಕಿಗೂ ಮೂರು ಪಶ್ಚಿಮ ದಿಕ್ಕಿಗೂ ಮೂರು ದಕ್ಷಿಣ ದಿಕ್ಕಿಗೂ ಮೂರು ಪೂರ್ವ ದಿಕ್ಕಿಗೂ ಮುಖಮಾಡಿಕೊಂಡಿದ್ದವು. ಕಡಲು ಅವುಗಳ ಬೆನ್ನಿನ ಮೇಲೆ ಇತ್ತು. ಅವುಗಳ ಹಿಂಭಾಗ ಒಳಗಡೆ ಇತ್ತು.</verse>
				<verse number="26">ಕೊಳದ ತಗಡು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲಾಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಸುಮಾರು ನಾಲ್ವತ್ತು ಸಾವಿರ ಲೀಟರ್ ನೀರನ್ನು ಹಿಡಿಯುತ್ತಿತ್ತು.</verse>
				<verse number="27">ಇದಲ್ಲದೆ, ಹೀರಾಮನು ಹತ್ತು ಕಂಚಿನ ಪೀಠಗಳನ್ನು ಮಾಡಿದನು. ಪ್ರತಿಯೊಂದು 1:8 ಮೀಟರ್ ಉದ್ದ, 1:8 ಮೀಟರ್ ಅಗಲ, 1:3 ಮೀಟರ್ ಎತ್ತರ ಇತ್ತು.</verse>
				<verse number="28">ಅವುಗಳನ್ನು ಮಾಡಿದ ವಿಧಾನ ಹೇಗೆಂದರೆ: ಅವುಗಳಲ್ಲಿ ನಿಲುವು ಪಟ್ಟಿಗಳಿಂದ ಕೂಡಿದ ಅಡ್ಡಪಟ್ಟಿಗಳಿದ್ದವು.</verse>
				<verse number="29">ಆ ಅಡ್ಡಪಟ್ಟಿಗಳ ಮೇಲೆ ಸಿಂಹ, ಹೋರಿ, ಕೆರೂಬಿ, ಇವುಗಳ ಚಿತ್ರಗಳಿದ್ದವು; ನಿಲುವುಪಟ್ಟಿಗಳಿಗೂ ಇದೇ ಅಲಂಕಾರವಿತ್ತು; ಸಿಂಹ, ಹೋರಿ, ಇವುಗಳ ಮೇಲೂ ಕೆಳಗೂ ತೋರಣಚಿತ್ರಗಳಿದ್ದವು.</verse>
				<verse number="30">ಪ್ರತಿಯೊಂದು ಪೀಠಕ್ಕೆ ನಾಲ್ಕು ತಾಮ್ರದ ಗಾಲಿಗಳೂ ಅಚ್ಚುಗಳೂ ಇದ್ದವು. ಪ್ರತಿಯೊಂದು ನಿಲುವುಪಟ್ಟಿಯ ಮೇಲಿನ ತುದಿಯಲ್ಲಿ ಎರಕಹೊಯ್ದ ತಾಮ್ರದ ಹಿಡಿಗಳಿದ್ದವು; ಅವು ಪೀಠದ ಮೇಲಿನ ನೀರಿನ ಬಾನೆಯನ್ನು ಹಿಡಿಯುತ್ತಿದ್ದವು. ಅವುಗಳ ಹೊರ ಮೈಗೆ ತೋರಣಚಿತ್ರಗಳಿದ್ದವು.</verse>
				<verse number="31">ಈ ಬಾನೆಯನ್ನು ಇಡುವುದಕ್ಕಾಗಿ ಪೀಠದ ಮೇಲಿನ ಭಾಗದಲ್ಲಿ ಒಂದು ಅಥವಾ ಒಂದುವರೆ ಮೊಳ ಎತ್ತರವಾದ ಬಾಯಿ ಇತ್ತು. ಚಕ್ರಾಕಾರವಾಗಿದ್ದ ಈ ಬಾಯಿಯು ಒಂದೂವರೆ ಮೊಳ ಅಗಲವಾಗಿತ್ತು. ಇದರ ಮೇಲೆಯೂ ಚಿತ್ರಗಳಿದ್ದವು. ಇದಕ್ಕೆ ಆಧಾರವಾದ ಅಡ್ಡಪಟ್ಟಿಗಳು ಚಕ್ರಾಕಾರವಾಗಿರದೆ ಚತುಷ್ಕೋನದವುಗಳಾಗಿದ್ದವು.</verse>
				<verse number="32">ಮೇಲೆ ಕಂಡ ನಾಲ್ಕು ಗಾಲಿಗಳು ಅಡ್ಡಪಟ್ಟಿಗಳ ಕೆಳಗೆ ಇದ್ದವು. ಇರಸೂ ಪೀಠವೂ ಅಖಂಡವಾಗಿದ್ದವು; ಪ್ರತಿಯೊಂದು ಗಾಲಿಯೂ ಒಂದುವರೆ ಮೊಳ ಎತ್ತರವಿತ್ತು.</verse>
				<verse number="33">ಅವು ಸಾಧಾರಣವಾದ ಬಂಡಿಗಳ ಗಾಲಿಗಳಂತೆಯೇ ಇದ್ದವು. ಆದರೆ ಅವುಗಳ ಕಟ್ಟು, ಅರ, ಕುಂಭ, ಇವುಗಳೂ ಅವುಗಳಿಗೆ ಸಂಬಂಧಪಟ್ಟ ಇರಸೂ ತಾಮ್ರದವುಗಳು.</verse>
				<verse number="34">ಪ್ರತಿಯೊಂದು ಪೀಠದ ತುದಿಯಲ್ಲಿದ್ದ ನಾಲ್ಕು ಹಿಡಿಗಳು ಪೀಠದೊಡನೆ ಅಖಂಡವಾಗಿದ್ದವು.</verse>
				<verse number="35">ಪೀಠದ ಮೇಲಿನ ಭಾಗದಲ್ಲಿದ್ದ ಚಕ್ರಾಕಾರ ಆದ ಬಾಯಿಯು ಅರ್ಧಮೊಳ ಎತ್ತರವಾಗಿತ್ತು. ಪೀಠದ ಮೇಲಿನ ಭಾಗದಲ್ಲಿದ್ದ ಹಿಡಿಗಳೂ ಅಡ್ಡಪಟ್ಟಿಗಳೂ ಅದರೊಡನೆ ಅಖಂಡವಾಗಿದ್ದವು;</verse>
				<verse number="36">ಆ ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರಮೈಗೂ ಸ್ಥಳವಿದ್ದ ಪ್ರಕಾರ ಕೆರೂಬಿ, ಸಿಂಹ, ಖರ್ಜೂರವೃಕ್ಷ, ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣಚಿತ್ರಗಳನ್ನೂ ಮಾಡಿದನು.</verse>
				<verse number="37">ಲೋಹಗಳನ್ನು ಒಂದೇ ಸಾರಿ ಕರಗಿಸಿ ಆ ಹತ್ತು ಪೀಠಗಳನ್ನು ಮಾಡಿದನು. ಅವುಗಳ ಆಕಾರವೂ ಅಳತೆಯೂ ಒಂದೇ.</verse>
				<verse number="38">ಇದಲ್ಲದೆ ಹೀರಾಮನು 800 ಲೀಟರ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಬಾನೆಗಳನ್ನು ಮಾಡಿ ಪ್ರತಿ ಒಂದು ಪೀಠದ ಮೇಲೆ ಒಂದೊಂದು ಬಾನೆಯನ್ನು ಇಟ್ಟನು.</verse>
				<verse number="39">ಐದು ಪೀಠಗಳನ್ನು ದೇವಾಲಯದ ಬಲಗಡೆಯಲ್ಲಿಯೂ ಐದು ಪೀಠಗಳನ್ನು ಎಡಗಡೆಯಲ್ಲಿಯೂ ಇಟ್ಟನು. ಕಂಚಿನ ಕಡಲನ್ನು ದೇವಾಲಯದ ಬಲಗಡೆಯಲ್ಲಿ, ಅಂದರೆ ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿರಿಸಿದನು.</verse>
				<verse number="40">ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀರಾಮನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕಾಗಿ ಮಾಡಿದ ಒಟ್ಟು ಸಾಮಾನುಗಳು ಯಾವುವೆಂದರೆ:-</verse>
				<verse number="41">ಎರಡು ಕಂಬಗಳು; ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕಲು ಎರಡು ಜಾಲರಿಗಳು;</verse>
				<verse number="42">ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸಲು ತಾಮ್ರದ ನಾನೂರು ದಾಳಿಂಬೆ ಹಣ್ಣುಗಳು;</verse>
				<verse number="43">ಹತ್ತು ಪೀಠಗಳು, ಅವುಗಳ ಮೇಲಿದ್ದ ಹತ್ತು ನೀರಿನ ಬಾನೆಗಳು;</verse>
				<verse number="44">ಕಂಚಿನ ಕಡಲು, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು;</verse>
				<verse number="45">ಹಂಡೆ, ಸಲಿಕೆ ಹಾಗು ಬೋಗುಣಿಗಳು. ಹೀರಾಮನು ಅರಸ ಸೊಲೊಮೋನನ ಅಪ್ಪಣೆಯಂತೆ ಸರ್ವೇಶ್ವರನ ಆಲಯಕ್ಕಾಗಿ ಈ ಎಲ್ಲ ಸಾಮಗ್ರಿಗಳನ್ನು ಒಪ್ಪಹಾಕಿದ ತಾಮ್ರದಿಂದ ಮಾಡಿದನು.</verse>
				<verse number="46">ಅರಸನು ಜೋರ್ಡನಿನ ತಗ್ಗಿನಲ್ಲಿ ಸುಕ್ಕೋತಿಗೂ ಚಾರೆತಾನಿಗೂ ಮಧ್ಯದಲ್ಲಿರುವ ಮಣ್ಣು ನೆಲದ ಕುಲುಮೆಯಲ್ಲಿ ಎರಕಹೊಯ್ಸಿದನು.</verse>
				<verse number="47">ಸೊಲೊಮೋನನು ತಾನು ಮಾಡಿಸಿದ ಸಾಮಗ್ರಿಗಳು ಅನೇಕವಾಗಿದ್ದುದರಿಂದ ಅವುಗಳ ತಾಮ್ರದ ತೂಕ ಇಷ್ಟೆಂಬುದನ್ನು ನಿರ್ಧರಿಸಲಾಗಲಿಲ್ಲ.</verse>
				<verse number="48">ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಗ್ರಿಗಳು ಯಾವುವೆಂದರೆ:- ಬಂಗಾರದ ಧೂಪವೇದಿಕೆ, ನೈವೇದ್ಯವಾದ ರೊಟ್ಟಿಗಳನ್ನಿಡುವುದಕ್ಕಾಗಿ ಬಂಗಾರದ ಮೇಜು,</verse>
				<verse number="49">ಮಹಾಪರಿಶುದ್ಧ ಸ್ಥಳದ ಎದುರಿಗೆ ಎಡಗಡೆಯಲ್ಲೂ ಬಲಗಡೆಯಲ್ಲೂ ಐದೈದರಂತೆ ಇಡುವುದಕ್ಕಾಗಿ ಚೊಕ್ಕಬಂಗಾರದಿಂದ ಮಾಡಿದ ಪುಷ್ಪಾಲಂಕಾರವುಳ್ಳ ಹತ್ತು ದೀಪವೃಕ್ಷಗಳು, ಬಂಗಾರದ ಹಣತೆ ತಂಡಸುಗಳು,</verse>
				<verse number="50">ಚೊಕ್ಕಬಂಗಾರದ ಬಟ್ಟಲುಗಳು, ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು, ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗುಡಿಯ ಕದಗಳಿಗೂ ಪರಿಶುದ್ಧಸ್ಥಳದ ಕದಗಳಿಗೂ ಇರುವ ಬಂಗಾರದ ತಿರುಗಣಿಗಳು,</verse>
				<verse number="51">ಸೊಲೊಮೋನನು ಸರ್ವೇಶ್ವರನ ಆಲಯಕ್ಕೆ ಬೇಕಾದ ಎಲ್ಲಾ ಸಾಮಗ್ರಿಗಳನ್ನು ಸಿದ್ಧಮಾಡಿಸಿದ ನಂತರ ತನ್ನ ತಂದೆ ದಾವೀದನು ಸರ್ವೇಶ್ವರನಿಗೆ ಹರಕೆಹೊತ್ತು ಪ್ಟತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಸಾಮಗ್ರಿಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.</verse>
			</chapter>
			<chapter number="8">
				<verse number="1">ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ದಾವೀದನಗರವಾದ ಸಿಯೋನಿನಿಂದ ದೇವಾಲಯಕ್ಕೆ ತರುವುದಕ್ಕಾಗಿ, ಇಸ್ರಯೇಲರ ಹಿರಿಯರು, ಕುಲಗಳ ನಾಯಕರು, ಇವರೇ ಮೊದಲಾದ ಎಲ್ಲ ಇಸ್ರಯೇಲ್ ಪ್ರಮುಖ ವ್ಯಕ್ತಿಗಳು ಜೆರುಸಲೇಮಿಗೆ, ತನ್ನ ಆಸ್ಥಾನಕ್ಕೆ, ಬರಬೇಕೆಂದು ಅರಸ ಸೊಲೊಮೋನನು ಆಜ್ಞಾಪಿಸಿದನು.</verse>
				<verse number="2">ಅಂತೆಯೇ ಆ ಇಸ್ರಯೇಲರೆಲ್ಲರು ಏಳನೆಯ ತಿಂಗಳಾದ ಅಶ್ವಯುಜ ಮಾಸದಲ್ಲಿ ಜಾತ್ರೆಯಾಗಿ ಅರಸ ಸೊಲೊಮೋನನ ಬಳಿಗೆ ಕೂಡಿಬಂದರು.</verse>
				<verse number="3">ಇಸ್ರಯೇಲರ ಹಿರಿಯರೆಲ್ಲರು ಹೀಗೆ ಕೂಡಿಬಂದಿರಲು ಯಾಜಕರು ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡರು.</verse>
				<verse number="4">ಉಳಿದ ಯಾಜಕರೂ ಲೇವಿಯರೂ ದೇವದರ್ಶನದ ಗುಡಾರ ಹಾಗು ಅದರಲ್ಲಿದ್ದ ಪವಿತ್ರವಸ್ತುಗಳನ್ನು ಹೊತ್ತರು.</verse>
				<verse number="5">ಅರಸ ಸೊಲೊಮೋನನು ಹಾಗು ಅಲ್ಲಿ ಕೂಡಿಬಂದಿದ್ದ ಎಲ್ಲ ಇಸ್ರಯೇಲರೂ ಮಂಜೂಷದ ಮುಂದೇ ಅಸಂಖ್ಯವಾದ ಕುರಿದನಗಳನ್ನು ಬಲಿದಾನಮಾಡಿದರು.</verse>
				<verse number="6">ಯಾಜಕರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಹೊತ್ತುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗುಡಿಯಲ್ಲಿ, ಕೆರೂಬಿಗಳ ರೆಕ್ಕೆಗಳ ಕೆಳಗೆ, ಅದಕ್ಕೆ ನೇಮಕವಾದ ಸ್ಥಳದಲ್ಲಿಟ್ಟರು.</verse>
				<verse number="7">ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದುದರಿಂದ ಮಂಜೂಷವು ಹಾಗು ಅದರ ಕೋಲುಗಳು ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.</verse>
				<verse number="8">ಆ ಕೋಲುಗಳು ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗುಡಿಯ ಎದುರಿನಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು. ಆದರೆ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲಿಯೇ ಇರುತ್ತವೆ.</verse>
				<verse number="9">ಮಂಜೂಷದಲ್ಲಿ ಎರಡು ಶಿಲಾಶಾಸನಗಳನ್ನು ಬಿಟ್ಟರೆ, ಬೇರೇನೂ ಇರಲಿಲ್ಲ. ಸರ್ವೇಶ್ವರ ಈಜಿಪ್ಟಿನಿಂದ ಬಂದ ಇಸ್ರಯೇಲರೊಡನೆ ಹೋರೇಬ್ ಬೆಟ್ಟದ ಬಳಿ ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆ ಆ ಶಾಸನಗಳನ್ನು ಅದರಲ್ಲಿ ಇಟ್ಟಿದ್ದನು.</verse>
				<verse number="10">ಯಾಜಕರು ಆ ಪರಿಶುದ್ಧ ಸ್ಥಳದಿಂದ ಹೊರಗೆ ಬಂದಕೂಡಲೆ ಮೇಘವು ಸರ್ವೇಶ್ವರನ ಆಲಯವನ್ನು ತುಂಬಿಕೊಂಡಿತು.</verse>
				<verse number="11">ಸರ್ವೇಶ್ವರನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಆ ಮೇಘವು ಆಲಯವನ್ನು ಆವರಿಸಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡಲಾಗಲಿಲ್ಲ.</verse>
				<verse number="12">ಆಗ ಸೊಲೊಮೋನನು ಹೀಗೆಂದು ಪ್ರಾರ್ಥಿಸಿದನು: “ಹೇ ಸರ್ವೇಶ್ವರ, ರವಿಯನು ಆಗಸದಲಿ ಸ್ಥಿರವಿರಿಸಿದ ನೀವು ಆರಿಸಿಕೊಂಡಿರಿ, ಕರಿಮೋಡದಲಿ ವಾಸಿಸಲು ನಾ ನಿರ್ಮಿಸಿರುವ ಈ ಭವ್ಯಮಂದಿರ ನಿಮಗಾಗಲಿ ಶಾಶ್ವತವಾದ ನಿವಾಸ.”</verse>
				<verse number="13"></verse>
				<verse number="14">ಇದಾದ ಮೇಲೆ, ಎದ್ದುನಿಂತಿದ್ದ ಇಸ್ರಯೇಲ್ ಸಮಾಜದ ಕಡೆಗೆ ಅರಸನು ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು.</verse>
				<verse number="15">“ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನ ತಂದೆ ದಾವೀದನಿಗೆ ಬಾಯಿಂದ ನುಡಿದದ್ದನ್ನು ಈಗ ಕೈಯಿಂದ ನೆರವೇರಿಸಿದ್ದಾರೆ.</verse>
				<verse number="16">‘ನಾನು ನನ್ನ ಜನರಾದ ಇಸ್ರಯೇಲರನ್ನು ಈಜಿಪ್ಟಿನಿಂದ ಬರಮಾಡಿದಂದಿನಿಂದ ನನ್ನ ನಾಮದ ನಿವಾಸಕ್ಕಾಗಿ ಆಲಯ ಸ್ಥಾನವನ್ನಾಗಲಿ, ಇಸ್ರಯೇಲ್ ಕುಲಗಳ ಯಾವ ಪಟ್ಟಣವನ್ನಾಗಲಿ ಆರಿಸಿಕೊಳ್ಳಲಿಲ್ಲ. ಆದರೆ ನನ್ನ ಪ್ರಜೆ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನು ಆರಿಸಿಕೊಂಡೆ’ ಎಂದು ಹೇಳಿದ್ದರು.</verse>
				<verse number="17">ನನ್ನ ತಂದೆ ದಾವೀದನು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದಾಗ,</verse>
				<verse number="18">‘ನೀನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವುದಕ್ಕೆ ಮನಸ್ಸುಮಾಡಿದ್ದು ಒಳ್ಳೆಯದೇ ಸರಿ.</verse>
				<verse number="19">ಆದರೆ ಅದನ್ನು ಕಟ್ಟಬೇಕಾದವನು ನೀನಲ್ಲ; ನಿನ್ನಿಂದ ಹುಟ್ಟುವ ಮಗನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕು’ ಎಂದು ಹೇಳಿದರು.</verse>
				<verse number="20">ಸರ್ವೇಶ್ವರ ತಾವು ಕೊಟ್ಟ ಮಾತನ್ನು ನೆರವೇರಿಸಿದ್ದಾರೆ. ಅವರ ವಾಗ್ದಾನದಂತೆ ನಾನು ನನ್ನ ತಂದೆ ದಾವೀದರ ಸ್ಥಾನದಲ್ಲಿ ಇಸ್ರಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡಿದ್ದೇನೆ; ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿಸಿದ್ದೇನೆ;</verse>
				<verse number="21">ಇದಲ್ಲದೆ, ಈಜಿಪ್ಟಿನಿಂದ ಬಿಡುಗಡೆಹೊಂದಿದ ನಮ್ಮ ಪಿತೃಗಳಿಗೆ ಸರ್ವೆಶ್ವರನಿಂದ ದೊರೆತ ನಿಬಂಧನಶಾಸನಗಳಿರುವ ಮಂಜೂಷಕ್ಕೆ ಪ್ರತ್ಯೇಕ ಸ್ಥಳವನ್ನು ಗುರುತಿಸಿ ಅಲ್ಲಿ ಅದನ್ನು ಇಟ್ಟಿದ್ದೇನೆ,” ಎಂದು ಹೇಳಿದನು.</verse>
				<verse number="22">ಬಳಿಕ ಸೊಲೊಮೋನನು ಇಸ್ರಯೇಲರೆಲ್ಲರ ಎದುರಿನಲ್ಲಿ ಸರ್ವೇಶ್ವರನ ಬಲಿಪೀಠದ ಮುಂದೆ ನಿಂತು, ಆಕಾಶದ ಕಡೆಗೆ ಕೈಗಳನ್ನೆತ್ತಿ, ಹೀಗೆ ಪ್ರಾರ್ಥಿಸಿದನು:</verse>
				<verse number="23">“ಇಸ್ರಯೇಲ್ ದೇವರಾದ ಸರ್ವೇಶ್ವರಾ, ಭೂಲೋಕದಲ್ಲೂ ಪರಲೋಕದಲ್ಲೂ ನಿಮಗೆ ಸಮಾನರಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿಮಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಭಕ್ತರ ಬಗ್ಗೆ ನಿಮ್ಮ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿಸುವವರು ನೀವು.</verse>
				<verse number="24">ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ಈಡೇರಿಸಿದ್ದೀರಿ; ನಿಮ್ಮ ಬಾಯಿ ನುಡಿದದ್ದನ್ನು ನಿಮ್ಮ ಕೈ ಈಗ ನೆರವೇರಿಸಿತು.</verse>
				<verse number="25">ಇಸ್ರಯೇಲ್ ದೇವರಾದ ಸರ್ವೇಶ್ವರಾ, ನೀವು ನನ್ನ ತಂದೆ ದಾವೀದನಿಗೆ, ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವುದು ತಪ್ಪದು; ಎಂಬುದಾಗಿ ವಾಗ್ದಾನಮಾಡಿದ್ದೀರಿ; ಅದನ್ನು ನೆರವೇರಿಸಿರಿ.</verse>
				<verse number="26">ಇಸ್ರಯೇಲ್ ದೇವರೇ, ನೀವು ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ನುಡಿದದ್ದೆಲ್ಲವೂ ಸಾರ್ಥಕವಾಗಲಿ!</verse>
				<verse number="27">“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ, ಉನ್ನತೋನ್ನತ ಆದ ಆಕಾಶವೂ, ನಿಮ್ಮ ವಾಸಕ್ಕೆ ಸಾಲದು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?</verse>
				<verse number="28">ಆದರೂ ನನ್ನ ದೇವರೇ, ಸರ್ವೇಶ್ವರಾ, ನಿಮ್ಮ ದಾಸನ ಪ್ರಾರ್ಥನೆಗೂ ವಿಜ್ಞಾಪನೆಗೂ ಕಿವಿಗೊಡಿ; ಈ ದಿನ ನಿಮ್ಮನ್ನು ಪ್ರಾರ್ಥಿಸುತ್ತಿರುವ ನಿಮ್ಮ ದಾಸನ ಮೊರೆಯನ್ನು ಆಲಿಸಿರಿ.</verse>
				<verse number="29">ಈ ಸ್ಥಳವನ್ನು ಕುರಿತು, ‘ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು’ ಎಂದು ಹೇಳಿದವರೇ, ನಿಮ್ಮ ಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿಮ್ಮ ದಾಸನು ನಿಮ್ಮನ್ನು ಪ್ರಾರ್ಥಿಸುವಾಗಲೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸಿರಿ.</verse>
				<verse number="30">ನಿಮ್ಮ ದಾಸನಾದ ನಾನಾಗಲಿ, ನಿಮ್ಮ ಪ್ರಜೆಗಳಾದ ಇಸ್ರಯೇಲರಾಗಲಿ, ಈ ಸ್ಥಳದ ಕಡೆಗೆ ತಿರುಗಿಕೊಂಡು ನಿಮ್ಮನ್ನು ಪ್ರಾರ್ಥಿಸಿದರೆ ನಿಮ್ಮ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸಿರಿ.</verse>
				<verse number="31">“ನೆರೆಯವನಿಗೆ ವಿರುದ್ಧ ತಪ್ಪುಮಾಡಿದವ ಎಂಬ ಸಂಶಯಕ್ಕೆ ಗುರಿಯಾದ ಒಬ್ಬ ವ್ಯಕ್ತಿ ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ, ಅಂಥವನು ಈ ಆಲಯಕ್ಕೆ ಬಂದು, ನಿಮ್ಮ ಪೀಠದ ಮುಂದೆ ನಿಂತು ಪ್ರಮಾಣಮಾಡಿದರೆ,</verse>
				<verse number="32">ಪರಲೋಕದಲ್ಲಿರುವ ನೀವು ಅದನ್ನು ಕೇಳಿ ನಿಮ್ಮ ದಾಸರಾದ ಭಕ್ತರ ವ್ಯಾಜ್ಯವನ್ನು ತೀರಿಸಿರಿ; ದುಷ್ಟನನ್ನು ಖಂಡಿಸಿ ಅವನ ತಪ್ಪನ್ನು ಅವನ ತಲೆಯ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿ; ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದು ತೋರಿಸಿಕೊಡಿ..</verse>
				<verse number="33">“ತಮ್ಮ ಪಾಪಗಳ ಸಲುವಾಗಿ ಶತ್ರುಗಳ ಮುಂದೆ ತಲೆತಗ್ಗಿಸಬೇಕಾಗುವ ನಿಮ್ಮ ಪ್ರಜೆಗಳಾದ ಇಸ್ರಯೇಲರು ನಿಮ್ಮ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಎತ್ತಿ ಈ ಆಲಯದಲ್ಲಿ ನಿಮಗೆ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡಿದರೆ,</verse>
				<verse number="34">ಪರಲೋಕದಲ್ಲಿರುವ ನೀವು ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ಪಿತೃಗಳಿಗೆ ನೀವು ಕೊಟ್ಟ ಈ ನಾಡಿಗೆ ಅವರನ್ನು ಮರಳಿಬರಮಾಡಿ.</verse>
				<verse number="35">“ಅವರ ಪಾಪಗಳ ನಿಮಿತ್ತ ಆಕಾಶವು ಮಳೆಗರೆಯದೆ ತೆರೆ ಮುಚ್ಚಿಕೊಂಡಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು, ತಮ್ಮನ್ನು ತಗ್ಗಿಸಿದವರು ನೀವೇ ಎಂದು ನಿಮ್ಮ ನಾಮವನ್ನು ಎತ್ತಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸಿದರೆ,</verse>
				<verse number="36">ಪರಲೋಕದಲ್ಲಿರುವ ನೀವು ಆಲಿಸಿ ನಿಮ್ಮ ಭಕ್ತರೂ ಪ್ರಜೆಗಳೂ ಆದ ಇಸ್ರಯೇಲರ ಪಾಪಗಳನ್ನು ಕ್ಷಮಿಸಿರಿ; ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿರಿ; ನಿಮ್ಮ ಪ್ರಜೆಗೆ ಸ್ವಂತ ಸೊತ್ತಾಗಿ ಕೊಟ್ಟ ನಾಡಿಗೆ ಮಳೆಯನ್ನು ಅನುಗ್ರಹಿಸಿರಿ.</verse>
				<verse number="37">“ನಾಡಿಗೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಬೂದಿ, ಮಿಡತೆ, ಚಿಟ್ಟೇಹುಳು, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಇಂಥ ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ, ಬಾಧೆ ಉಂಟಾದರೆ,</verse>
				<verse number="38">ಮನಸ್ಸಾಕ್ಷಿ ಪೀಡಿತರಾದ ಇಡೀ ಇಸ್ರಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ, ಈ ಆಲಯದ ಕಡೆಗೆ ಕೈಯೆತ್ತಿ ನಿಮಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿದರೆ</verse>
				<verse number="39">ಮನುಷ್ಯರ ಅಂತರಂಗಗಳನ್ನು ಬಲ್ಲಂಥ ನೀವು, ನಿಮ್ಮ ನಿವಾಸವಾಗಿರುವ ಪರಲೋಕದಿಂದ ಆಲಿಸಿರಿ; ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸಿರಿ; ನೀವೊಬ್ಬರೇ ಎಲ್ಲಾ ಮಾನವರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡಿ.</verse>
				<verse number="40">ಆಗ ನಮ್ಮ ಪಿತೃಗಳಿಗೆ ನೀವು ಕೊಟ್ಟ ಈ ನಾಡಿನಲ್ಲಿ ಅವರು ವಾಸಿಸುವ ಕಾಲವೆಲ್ಲಾ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿರುವರು.</verse>
				<verse number="41">“ನಿಮ್ಮ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ, ಇವುಗಳ ಸಂದೇಶ ಪರರಾಜ್ಯಗಳವರಿಗೂ ಗೊತ್ತಾಗುವುದು.</verse>
				<verse number="42">ನಿಮ್ಮ ಪ್ರಜೆಗಳಾದ ಇಸ್ರಯೇಲರಿಗೆ ಸೇರದವನಾದ ಒಬ್ಬ ಪರದೇಶೀಯನು ನಿಮ್ಮ ನಾಮಸ್ತುತಿಗಾಗಿ ದೂರದೇಶದಿಂದ ಬಂದು ಈ ಆಲಯದ ಮುಂದೆ ನಿಂತು, ನಿಮ್ಮನ್ನು ಪ್ರಾರ್ಥಿಸಿದರೆ,</verse>
				<verse number="43">ನಿಮ್ಮ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿರಿ; ಆಗ ಲೋಕದ ಎಲ್ಲಾ ಜನರು ನಿಮ್ಮ ನಾಮಮಹತ್ತನ್ನು ತಿಳಿದು, ನಿಮ್ಮ ಜನರಾದ ಇಸ್ರಯೇಲರಂತೆ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿಮ್ಮ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದೆನೆಂದು ತಿಳಿದುಕೊಳ್ಳುವರು.</verse>
				<verse number="44">“ನೀವು ನಿಮ್ಮ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೆ ಎಲ್ಲಿಗಾದರೂ ಕಳುಹಿಸಿದಾಗ ಅವರು ಅಲ್ಲಿಂದ ನೀವು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ಸರ್ವೇಶ್ವರನಾದ ನಿಮ್ಮನ್ನು ಪ್ರಾರ್ಥಿಸಿದರೆ,</verse>
				<verse number="45">ಪರಲೋಕದಲ್ಲಿರುವ ನೀವು ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಕೇಳಿ ಅವರಿಗೆ ಜಯವನ್ನು ನೀಡಿರಿ.</verse>
				<verse number="46">“ಅವರು ನಿಮಗೆ ವಿರುದ್ಧ ಪಾಪಮಾಡಬಹುದು. ಪಾಪಮಾಡದ ವ್ಯಕ್ತಿ ಒಬ್ಬನೂ ಇಲ್ಲ. ನೀವು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ, ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ,</verse>
				<verse number="47">ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಪಶ್ಚಾತ್ತಾಪಪಟ್ಟು,</verse>
				<verse number="48">ನಿಮ್ಮ ಅನುಗ್ರಹದಿಂದ ತಮ್ಮ ಪಿತೃಗಳಿಗೆ ದೊರಕಿದ ನಾಡಿನ ಕಡೆಗೂ ನೀವು ಆರಿಸಿಕೊಂಡ ಪಟ್ಟಣದ ಕಡೆಗೂ ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು, ‘ನಾವು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿಕೊಂಡು ಪೂರ್ಣಮನಸ್ಸಿನಿಂದ ಹಾಗು ಪೂರ್ಣಪ್ರಾಣದಿಂದ, ನಿಮ್ಮನ್ನು ಪ್ರಾರ್ಥಿಸಿದರೆ,</verse>
				<verse number="49">ನೀವು ನಿಮ್ಮ ನಿವಾಸವಾಗಿರುವ ಪರಲೋಕದಿಂದ ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಆಲಿಸಿರಿ; ಅವರಿಗೆ ದಯೆಯನ್ನು ತೋರಿಸಿರಿ.</verse>
				<verse number="50">ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಈಜಿಪ್ಟ್ ದೇಶದಿಂದ ನೀವು ಬಿಡಿಸಿದ ಈ ಜನರು ನಿಮ್ಮ ಸ್ವಕೀಯಜನರಾಗಿದ್ದಾರೆಂಬುದನ್ನು ನೆನಸಿ,</verse>
				<verse number="51">ಅವರು ನಿಮಗೆ ವಿರುದ್ಧ ಮಾಡಿದ ಎಲ್ಲಾ ಅಪರಾಧದ್ರೋಹಗಳನ್ನು ಕ್ಷಮಿಸಿರಿ; ಅವರನ್ನು ಸೆರೆಗೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆಹುಟ್ಟಿಸಿರಿ.</verse>
				<verse number="52">“ಹೇ ಸರ್ವೇಶ್ವರಾ, ನಿಮ್ಮ ದಾಸನಾದ ಅರಸನ ಮೇಲೆಯೂ ಪ್ರಜೆಗಳಾದ ಇಸ್ರಯೇಲರ ಮೇಲೆಯೂ ಕಟಾಕ್ಷವಿಟ್ಟು, ಅವರು ಪ್ರಾರ್ಥಿಸುವಾಗೆಲ್ಲಾ, ಅವರ ವಿಜ್ಞಾಪನೆಗಳನ್ನು ಆಲಿಸಿರಿ.</verse>
				<verse number="53">ಹೇ ಸರ್ವೇಶ್ವರಾ, ಸರ್ವೇಶ್ವರಾ, ನೀವು ನಮ್ಮ ಪಿತೃಗಳನ್ನು ಈಜಿಪ್ಟ್ ದೇಶದಿಂದ ಬಿಡಿಸುವಾಗ ಅವರಿಗೆ, ‘ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ ಸ್ವಕೀಯ ಜನರನ್ನಾಗಿ ಮಾಡಿಕೊಂಡಿದ್ದೇನೆ’ ಎಂದು ಮೋಶೆಯ ಮುಖಾಂತರ ಹೇಳಿದಿರಲ್ಲವೇ!” ಎಂದು ದೇವರನ್ನು ಪ್ರಾರ್ಥಿಸಿದನು.</verse>
				<verse number="54">ಆಕಾಶದ ಕಡೆಗೆ ಕೈಯೆತ್ತಿ ಸರ್ವೇಶ್ವರನ ಬಲಿಪೀಠದ ಮುಂದೆ ಮೊಣಕಾಲೂರಿದ್ದ ಸೊಲೊಮೋನನು ಈ ಪ್ರಕಾರ ಸರ್ವೇಶ್ವರನನ್ನು ಪ್ರಾರ್ಥಿಸಿದ ನಂತರ ಎದ್ದು ನಿಂತನು.</verse>
				<verse number="55">ಇಸ್ರಯೇಲ್ ಸರ್ವಸಮಾಜದವರನ್ನು ಆಶೀರ್ವದಿಸುತ್ತಾ ಗಟ್ಟಿಯಾಗಿ ಹೀಗೆಂದನು:</verse>
				<verse number="56">“ತಾವು ವಾಗ್ದಾನ ಮಾಡಿದಂತೆ ತಮ್ಮ ಪ್ರಜೆಗಳಾದ ಇಸ್ರಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ತಮ್ಮ ದಾಸ ಮೋಶೆಯ ಮುಖಾಂತರ ಮಾಡಿದ ಅತಿಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿಹೋಗಲಿಲ್ಲ.</verse>
				<verse number="57">ನಮ್ಮ ದೇವರಾದ ಸರ್ವೇಶ್ವರ ನಮ್ಮ ಪೂರ್ವಜರೊಂದಿಗೆ ಇದ್ದ ಹಾಗೆ ನಮ್ಮೊಂದಿಗೂ ಇರಲಿ! ಅವರು ನಮ್ಮನ್ನು ಕೈಬಿಡದಿರಲಿ, ತಳ್ಳದಿರಲಿ;</verse>
				<verse number="58">ನಮ್ಮ ಪೂರ್ವಜರಿಗೆ ಕೊಡಲಾದ ಆಜ್ಞಾನಿಯಮ ವಿಧಿಗಳನ್ನು ನಾವು ಕೈಗೊಂಡು, ದೈವಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತಮ್ಮ ಕಡೆಗೆ ತಿರುಗಿಸಿಕೊಳ್ಳಲಿ.</verse>
				<verse number="59">ನಾನು ಈಗ ನಮ್ಮ ದೇವರಾದ ಸರ್ವೇಶ್ವರನಿಗೆ ಮಾಡಿದ ಪ್ರಾರ್ಥನೆಯು ಹಗಲಿರುಳು ಅವರ ಜ್ಞಾಪಕದಲ್ಲಿರಲಿ.</verse>
				<verse number="60">ಭೂಲೋಕದ ಜನರೆಲ್ಲರೂ ಸರ್ವೇಶ್ವರನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ, ಅವರು ಅವಶ್ಯವಿರುವಾಗೆಲ್ಲಾ ತಮ್ಮ ದಾಸನ ಹಾಗು ಪ್ರಜೆಗಳಾದ ಇಸ್ರಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.</verse>
				<verse number="61">ನೀವಾದರೋ ಈಗಿನಂತೆ ಮುಂದೆಯೂ ನಮ್ಮ ದೇವರಾದ ಸರ್ವೇಶ್ವರನಲ್ಲಿ ಪೂರ್ಣಭಯಭಕ್ತಿಯುಳ್ಳವರಾಗಿ ಅವರ ವಿಧಿಗಳನ್ನು ಅನುಸರಿಸಿ ಆತನ ಆಜ್ಞೆಗಳನ್ನು ಕೈಗೊಳ್ಳಿರಿ.”</verse>
				<verse number="62">ಅರಸನು ಮತ್ತು ಇಸ್ರಯೇಲರೆಲ್ಲರು ಸರ್ವೇಶ್ವರನ ಸನ್ನಿಧಿಯಲ್ಲಿ ಬಲಿದಾನ ಮಾಡಿದರು.</verse>
				<verse number="63">ಸೊಲೊಮೋನನು ಸರ್ವೇಶ್ವರನಿಗೆ ಅರ್ಪಿಸಿದ ಶಾಂತಿಸಮಾಧಾನ ಬಲಿಗಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ; ಕುರಿಗಳು ಒಂದು ಲಕ್ಷದ ಇಪ್ಪತ್ತುಸಾವಿರ; ಈ ಪ್ರಕಾರ ಅರಸನೂ ಇಸ್ರಯೇಲರೆಲ್ಲರೂ ಸರ್ವೇಶ್ವರನ ಆಲಯವನ್ನು ಪ್ರತಿಷ್ಠಿಸಿದರು.</verse>
				<verse number="64">ಸರ್ವೇಶ್ವರನ ಆಲಯದ ಮುಂದಿರುವ ತಾಮ್ರದ ಬಲಿಪೀಠ ಈ ಎಲ್ಲಾ ದಹನಬಲಿದ್ರವ್ಯಗಳನ್ನೂ ಧಾನ್ಯನೈವೇದ್ಯಗಳನ್ನೂ‌ ಸಮಾಧಾನ ಬಲಿಯ ಕೊಬ್ಬನ್ನೂ ಹಿಡಿಸುವಷ್ಟು ದೊಡ್ಡದಾಗಿರಲಿಲ್ಲ. ಆದುದರಿಂದ ಸೊಲೊಮೋನನು ಆ ದಿವಸ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ ಅಲ್ಲಿಯೂ ಇವುಗಳನ್ನೆಲ್ಲ ಸಮರ್ಪಿಸಿದನು.</verse>
				<verse number="65">ಹೀಗೆ ಸೊಲೊಮೋನನು ಹಬ್ಬವನ್ನು ಆಚರಿಸಿದನು. ಅಂತೆಯೇ ಹಮಾತಿನ ದಾರಿ ಇಂದ ಈಜಿಪ್ಟಿನ ಹಳ್ಳದವರೆಗಿರುವ ಪ್ರಾಂತ್ಯಗಳಿಂದ ಮಹಾಸಮೂಹವಾಗಿ ಕೂಡಿಬಂದಿದ್ದ ಎಲ್ಲ ಇಸ್ರಯೇಲರು ಆಚರಿಸಿದರು; ಎರಡು ವಾರ, ಅಂದರೆ ಹದಿನಾಲ್ಕು ದಿವಸಗಳವರೆಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಹಬ್ಬಮಾಡಿದರು.</verse>
				<verse number="66">ಎಂಟನೆಯ ದಿವಸ ಜನರಿಗೆ ಹೋಗುವುದಕ್ಕೆ ಅಪ್ಪಣೆಯಾಯಿತು. ಅವರು ಅರಸನನ್ನು ವಂದಿಸಿ, ಸರ್ವೇಶ್ವರ ತಮ್ಮ ದಾಸ ದಾವೀದನಿಗೂ ತಮ್ಮ ಪ್ರಜೆಗಳಾದ ಇಸ್ರಯೇಲರಿಗೂ ಮಾಡಿದ ಸರ್ವೋಪಕಾರಗಳನ್ನು ಸ್ಮರಿಸಿ, ಆನಂದಚಿತ್ತರಾಗಿ ಹರ್ಷಿಸುತ್ತಾ, ತಮ್ಮ ತಮ್ಮ ನಿವಾಸಗಳಿಗೆ ತೆರಳಿದರು.</verse>
			</chapter>
			<chapter number="9">
				<verse number="1">ಸೊಲೊಮೋನನು ಸರ್ವೇಶ್ವರನ ಆಲಯವನ್ನು, ತನ್ನ ಅರಮನೆಯನ್ನು ಹಾಗು ತನಗೆ ಇಷ್ಟವಾದ ಬೇರೆ ಎಲ್ಲಾ ಮಂದಿರಗಳನ್ನೂ ಕಟ್ಟಿಮುಗಿಸಿದನು.</verse>
				<verse number="2">ಅನಂತರ ಸರ್ವೇಶ್ವರ, ಗಿಬ್ಯೋನಿನಲ್ಲಿ ಪ್ರತ್ಯಕ್ಷರಾದಂತೆ, ಅವನಿಗೆ ಎರಡನೆಯ ಸಾರಿ ಪ್ರತ್ಯಕ್ಷರಾದರು.</verse>
				<verse number="3">ಅವನಿಗೆ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ; ನನ್ನ ದೃಷ್ಟಿಯೂ ಮನಸ್ಸೂ ಪ್ರತಿದಿನ ಅದರ ಮೇಲಿರುವುವು.</verse>
				<verse number="4">ನೀನು ನಿನ್ನ ತಂದೆ ದಾವೀದನಂತೆ ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡು, ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಗೊಳ್ಳುತ್ತಾ ಬಂದರೆ, ಇಸ್ರಯೇಲರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು;</verse>
				<verse number="5">ಇಸ್ರಯೇಲ್ ಸಿಂಹಾಸನದ ಮೇಲೆ ನಿನ್ನ ಸಂತಾನದವರು ತಪ್ಪದೆ ಕುಳಿತುಕೊಳ್ಳುವರು ಎಂಬುದಾಗಿ ನಿನ್ನ ತಂದೆ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.</verse>
				<verse number="6">ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ, ನನ್ನ ಆಜ್ಞಾವಿಧಿಗಳನ್ನು ಕೈಗೊಳ್ಳದೆ, ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈಮುಗಿದರೆ,</verse>
				<verse number="7">ನಾನು ಕೊಟ್ಟ ನಾಡಿನಿಂದ ಇಸ್ರಯೇಲರನ್ನು ತೆಗೆದುಹಾಕುವೆನು; ನನ್ನ ಹೆಸರಿಗಾಗಿ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ಇಸ್ರಯೇಲರು ಎಲ್ಲಾ ಜನಾಂಗಗಳವರ ಲಾವಣಿಗೂ ನಿಂದೆಪರಿಹಾಸ್ಯಕ್ಕೂ ಗುರಿಯಾಗುವರು.</verse>
				<verse number="8">ಈ ಮಹಾಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ಚಕಿತರಾಗಿ, ‘ಅಬ್ಬಬ್ಬಾ, ಇದೇನು! ಸರ್ವೇಶ್ವರ ನಾಡಿಗೂ ಈ ಗುಡಿಗೂ ಹೀಗೇಕೆ ಮಾಡಿದರು?’ ಎಂದು ಕೇಳುವರು.</verse>
				<verse number="9">ಆಗ ಅವರಿಗೆ, ‘ಈ ನಾಡಿನವರು ತಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಬರಮಾಡಿದ ದೇವರಾದ ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಸರ್ವೇಶ್ವರ ಈ ಎಲ್ಲಾ ಆಪತ್ತು-ವಿಪತ್ತುಗಳನ್ನು ಬರಮಾಡಿದ್ದಾರೆ’ ಎಂಬ ಉತ್ತರಸಿಕ್ಕುವುದು,” ಎಂದರು.</verse>
				<verse number="10">ಅರಸ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಸರ್ವೇಶ್ವರನ ಆಲಯವನ್ನು ಹಾಗು ತನ್ನ ಅರಮನೆಯನ್ನು ಕಟ್ಟಿ ಮುಗಿಸಿದನು.</verse>
				<verse number="11">ತನಗೆ ಬೇಕಾದಷ್ಟು ದೇವದಾರು ಮರಗಳನ್ನು, ತುರಾಯಿ ಮರಗಳನ್ನು ಹಾಗು ಬಂಗಾರವನ್ನು ಕೊಟ್ಟಿದ್ದ ಟೈರಿನ ಅರಸ ಹೀರಾಮನಿಗೆ, ಗಲಿಲೇಯ ಪ್ರಾಂತ್ಯದಲ್ಲಿನ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.</verse>
				<verse number="12">ಹೀರಾಮನು ಟೈರಿನಿಂದ ಬಂದು ಆ ಪಟ್ಟಣಗಳನ್ನು ನೋಡಿದನು. ಅವು ಅವನ ಮನಸ್ಸಿಗೆ ಹಿಡಿಸಲಿಲ್ಲ.</verse>
				<verse number="13">ಆದುದರಿಂದ ಅವನು ಸೊಲೊಮೋನನಿಗೆ, “ಸಹೋದರನೇ, ನೀನು ನನಗೆ ಇದೆಂಥ ಪಟ್ಟಣಗಳನ್ನು ಕೊಟ್ಟಿರುವೆ!” ಎಂದು ಹೇಳಿ ಅವುಗಳಿಗೆ ‘ಕಾಬೂಲ್ ದೇಶ’ ಎಂದು ಹೆಸರಿಟ್ಟನು. ಅವುಗಳಿಗೆ ಇಂದಿನವರೆಗೂ ಇದೇ ಹೆಸರಿರುತ್ತದೆ.</verse>
				<verse number="14">ಹೀರಾಮನು ಸೊಲೊಮೋನನಿಗೆ, ನಾಲ್ಕು ಸಾವಿರ ಕಿಲೋಗ್ರಾಂ ಬಂಗಾರವನ್ನು ಕೊಟ್ಟನು.</verse>
				<verse number="15">ಸರ್ವೇಶ್ವರನ ಆಲಯ, ಅರಮನೆ, ಮಿಲ್ಲೋಕೋಟೆ, ಜೆರುಸಲೇಮಿನ ಪೌಳಿಗೋಡೆ, ಹಾಚೋರ್, ಮೆಗಿದ್ದೋ ಹಾಗು ಗೆಜೆರ್ ಇವುಗಳನ್ನು ಸೊಲೊಮೋನನು ಬಿಟ್ಟೀಕೆಲಸದವರಿಂದ ಕಟ್ಟಿಸಿದನು.</verse>
				<verse number="16">ಈಜಿಪ್ಟಿನ ಅರಸ ಫರೋಹನು, ಗೆಜೆರ್ ಪಟ್ಟಣವನ್ನು ಹಿಡಿದು ಅದನ್ನು ವಶಮಾಡಿಕೊಂಡು, ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಉಡುಗೊರೆಯಾಗಿ ಕೊಟ್ಟಿದ್ದನು.</verse>
				<verse number="17">ಗೆಜೆರ್ ಪಟ್ಟಣವನ್ನು ಬಿಟ್ಟು ಕೆಳಗಿನ ಬೇತ್-ಹೋರೋನ್,</verse>
				<verse number="18">ಬಾಲಾತ್, ಮರುಭೂಮಿಯಲ್ಲಿ ಇರುವ ತಾಮರ್,</verse>
				<verse number="19">ಉಗ್ರಾಣ ಪಟ್ಟಣಗಳು, ಯುದ್ಧರಥಗಳನ್ನಿರಿಸುವ ಪಟ್ಟಣಗಳು ಹಾಗು ರಾಹುತರ ಪಟ್ಟಣಗಳು ಇವುಗಳನ್ನೆಲ್ಲಾ ಕಟ್ಟಿಸಿದವನು ಸೊಲೊಮೋನನೇ. ಜೆರುಸಲೇಮಿನಲ್ಲೂ ಲೆಬನೋನಿನಲ್ಲೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲೂ ತನಗೆ ಇಷ್ಟವಾದುವುಗಳನ್ನೆಲ್ಲಾ ಅವನು ಕಟ್ಟಿಸಿದನು.</verse>
				<verse number="20">ಇಸ್ರಯೇಲರು ಸಂಹರಿಸದೆ ಉಳಿಸಿದ ಅನ್ಯಜನರನ್ನೂ ಕಾನಾನ್ ದೇಶದಲ್ಲಿ ಉಳಿದಿದ್ದ ಅಮೋರಿಯ, ಹಿತ್ತಿಯ, ಪೆರಿಜ್ಜೀಯ, ಹಿವ್ವೀಯ,</verse>
				<verse number="21">ಯೆಬೂಸಿಯ ಮೊದಲಾದ ಇತರ ಜನಾಂಗಗಳ ಸಂತಾನದವರೆಲ್ಲರನ್ನು ಬಿಟ್ಟೀ ಕೆಲಸಕ್ಕಾಗಿ ಇಟ್ಟಿದ್ದನು. ಇಂದಿನವರೆಗೂ ಅವರು ಬಿಟ್ಟೀ ಕೆಲಸದವರಾಗಿಯೇ ಇರುತ್ತಾರೆ.</verse>
				<verse number="22">ಆದರೆ ಅವನು ಇಸ್ರಯೇಲರನ್ನು ಬಿಟ್ಟಿಹಿಡಿಯಲಿಲ್ಲ; ಅವರನ್ನು ಸೈನಿಕರನ್ನಾಗಿ, ಪರಿವಾರದವರನ್ನಾಗಿ, ಅಧಿಪತಿಗಳನ್ನಾಗಿ, ಸರದಾರರನ್ನಾಗಿ, ಹಾಗೂ ರಥಾಶ್ವಬಲಗಳ ನಾಯಕರನ್ನಾಗಿ ನೇಮಿಸಿಕೊಂಡನು.</verse>
				<verse number="23">ಇದಲ್ಲದೆ, ಅವನು ಬಿಟ್ಟೀಕೆಲಸ ಮಾಡುವವರ ಮೇಲೆ ಐನೂರೈವತ್ತು ಮಂದಿ ಇಸ್ರಯೇಲರನ್ನು ಅಧಿಕಾರಿಗಳನ್ನಾಗಿ ನೇಮಿಸಿದನು.</verse>
				<verse number="24">ಫರೋಹನ ಮಗಳು (ದಾವೀದನಗರದಿಂದ) ತನಗೋಸ್ಕರ ಕಟ್ಟಿಸಿದ್ದ ಮಂದಿರಕ್ಕೆ ಬಂದಳು; ಅನಂತರ ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿದನು.</verse>
				<verse number="25">ಸೊಲೊಮೋನನು ಸರ್ವೇಶ್ವರನ ಆಲಯದ ಮುಂದೆ ಸರ್ವೇಶ್ವರನಿಗಾಗಿ ತಾನು ಕಟ್ಟಿಸಿದ ಬಲಿಪೀಠದ ಮೇಲೆ ವರ್ಷಕ್ಕೆ ಮೂರು ಸಾರಿ ದಹನಬಲಿ ಹಾಗು ಶಾಂತಿಸಮಾಧಾನಬಲಿಗಳನ್ನು ಸಮರ್ಪಿಸಿ ಧೂಪಾರತಿ ಎತ್ತುತ್ತಿದ್ದನು. ಹೀಗೆ ಅವನು ಮಹಾದೇವಾಲಯವನ್ನು ಕಟ್ಟಿಸಿಮುಗಿಸಿದನು.</verse>
				<verse number="26">ಎದೋಮ್ ದೇಶದಲ್ಲಿ ಎಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಅರಸ ಸೊಲೊಮೋನನು ಹಡಗುಗಳನ್ನು ಕಟ್ಟಿಸಿದನು.</verse>
				<verse number="27">ಹೀರಾಮನು ಸಮುದ್ರಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರೊಡನೆ ಆ ಹಡಗುಗಳಲ್ಲಿ ಕಳುಹಿಸಿದನು.</verse>
				<verse number="28">ಅವರು ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ ಹದಿನಾಲ್ಕು ಸಾವಿರ ಕಿಲೋಗ್ರಾಂಗೂ ಹೆಚ್ಚಿನ ಬಂಗಾರವನ್ನು ತೆಗೆದುಕೊಂಡು ಬಂದರು.</verse>
			</chapter>
			<chapter number="10">
				<verse number="1">ಸರ್ವೇಶ್ವರನ ನಾಮಮಹತ್ತಿನಿಂದ ಸೊಲೊಮೋನನ ಕೀರ್ತಿ ಹರಡಿತು. ಇದನ್ನು ಕೇಳಿದ ಶೆಬದ ರಾಣಿ ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕೆ ಬಂದಳು.</verse>
				<verse number="2">ಆಕೆ ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ, ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾಪರಿವಾರದೊಡನೆ ಜೆರುಸಲೇಮಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.</verse>
				<verse number="3">ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೆ ಉತ್ತರಕೊಟ್ಟನು; ಅರಸನಿಗೆ ಬಿಡಿಸಲು ಕ್ಲಿಷ್ಟವಾದ ಒಗಟು ಒಂದೂ ಇರಲಿಲ್ಲ.</verse>
				<verse number="4">ಶೆಬದ ರಾಣಿ ಸೊಲೊಮೋನನ ಹಲವಿಧವಾದ ಜ್ಞಾನೋಕ್ತಿಗಳನ್ನು ಕೇಳಿದಳು;</verse>
				<verse number="5">ಅವನು ಕಟ್ಟಿಸಿದ ಅರಮನೆ, ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನು ಮತ್ತು ಸರ್ವೇಶ್ವರನ ಆಲಯದಲ್ಲಿ ಅವನು ಸಮರ್ಪಿಸುತ್ತಿದ್ದ ದಹನಬಲಿಗಳನ್ನು ನೋಡಿದಳು. ಇವುಗಳಿಂದ ಆಶ್ಚರ್ಯಚಕಿತಳಾಗಿ,</verse>
				<verse number="6">“ನಾನು ನನ್ನ ದೇಶದಲ್ಲಿ ನಿಮ್ಮ ಜ್ಞಾನವನ್ನೂ ಸಾಧನೆಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.</verse>
				<verse number="7">ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕೆ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿಮ್ಮ ಜ್ಞಾನವೈಭವಗಳು, ನಾನು ಕೇಳಿದ್ದಕ್ಕಿಂತ ಮಿಗಿಲಾಗಿವೆ. ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ವರದಿ ಮಾಡಿರಲಿಲ್ಲ.</verse>
				<verse number="8">ನಿಮ್ಮ ಪ್ರಜೆಗಳು ಭಾಗ್ಯವಂತರು! ಸದಾ ನಿಮ್ಮ ಸನ್ನಿಧಿಯಲ್ಲಿದ್ದು ನಿಮ್ಮ ಜ್ಞಾನವಾಕ್ಯಗಳನ್ನು ಕೇಳುವ ನಿಮ್ಮ ಸೇವಕರು ಧನ್ಯರು!</verse>
				<verse number="9">ನಿಮ್ಮನ್ನು ಮೆಚ್ಚಿ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿಮ್ಮ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ಇಸ್ರಯೇಲರನ್ನು ಸದಾ ಪ್ರೀತಿಸುವವರಾಗಿರುವುದರಿಂದ ಆ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನು ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು.</verse>
				<verse number="10">ಆಕೆ ಅರಸನಿಗೆ ನಾಲ್ಕು ಸಾವಿರ ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನು, ಅಪರಿಮಿತ ಸುಗಂಧದ್ರವ್ಯವನ್ನು ಹಾಗು ರತ್ನಗಳನ್ನು ಕೊಟ್ಟಳು. ಶೆಬದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಬೇರೆ ಯಾರೂ ಈ ನಾಡಿಗೆ ಕೊಟ್ಟಿರಲಿಲ್ಲ.</verse>
				<verse number="11">ಹೀರಾಮನ ಹಡಗುಗಳು ಓಫೀರ್ ದೇಶದಿಂದ ಬಂಗಾರ ಮಾತ್ರವಲ್ಲ ಸುಗಂಧದ ಮರವನ್ನೂ ರತ್ನಗಳನ್ನೂ ರಾಶಿರಾಶಿಯಾಗಿ ತಂದವು.</verse>
				<verse number="12">ಅರಸನು ಸುಗಂಧದ ಮರದಿಂದ ದೇವಾಲಯಕ್ಕೆ ಹಾಗು ಅರಮನೆಗಳಿಗೆ ಮೆಟ್ಟಲುಗಳನ್ನು ವಾದ್ಯಗಾರರಿಗಾಗಿ ಕಿನ್ನರಿಗಳನ್ನು ಹಾಗು ಸ್ವರಮಂಡಲಗಳನ್ನು ಮಾಡಿಸಿದನು. ಆಗ ಬಂದಷ್ಟು ಸುಗಂಧದಮರ ಇಂದಿನವರೆಗೂ ಬರಲಿಲ್ಲ, ಮತ್ತು ಯಾರೂ ಅಷ್ಟನ್ನು ಕಾಣಲೇ ಇಲ್ಲ.</verse>
				<verse number="13">ಅರಸ ಸೊಲೊಮೋನನು ಶೆಬದ ರಾಣಿಗೆ ತಾನಾಗಿ ರಾಜಮರ್ಯಾದೆಯಿಂದ ಕೊಟ್ಟ ವಸ್ತುಗಳಲ್ಲದೆ, ಆಕೆ ಕೇಳಿದವುಗಳನ್ನೆಲ್ಲಾ ಕೊಟ್ಟುಬಿಟ್ಟನು. ಅನಂತರ ಆಕೆ ತನ್ನ ಪರಿವಾರದೊಡನೆ ಸ್ವದೇಶಕ್ಕೆ ಹೊರಟುಹೋದಳು.</verse>
				<verse number="14">ಸೊಲೊಮೋನನಿಗೆ ದೇಶಾಂತರ ವ್ಯಾಪಾರಿಗಳು, ವರ್ತಕರು, ಅರೇಬಿಯದ ಅರಸರು ಹಾಗು ಪ್ರದೇಶಾಧಿಪತಿಗಳು ತರುತ್ತಿದ್ದ ಬಂಗಾರವಲ್ಲದೆ</verse>
				<verse number="15">ಪ್ರತಿವರ್ಷ ಸುಮಾರು ಇಪ್ಪತ್ತಮೂರು ಸಾವಿರ ಕಿಲೋಗ್ರಾಂ ಬಂಗಾರ ದೊರಕುತ್ತಿತ್ತು.</verse>
				<verse number="16">ಅರಸ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು; ಪ್ರತಿಯೊಂದು ಗುರಾಣಿಗೆ ಸುಮಾರು ಏಳು ಕಿಲೋಗ್ರಾಂ ಬಂಗಾರ ಹಿಡಿಯಿತು.</verse>
				<verse number="17">ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನೂ ಮಾಡಿಸಿದನು. ಪ್ರತಿಯೊಂದು ಖೇಡ್ಯಕ್ಕೆ ಎರಡು ಕಿಲೋಗ್ರಾಂ ಬಂಗಾರ ಹಿಡಿಯಿತು. ಇವುಗಳನ್ನು ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರದಲ್ಲಿ ಇರಿಸಿದನು.</verse>
				<verse number="18">ಇದಲ್ಲದೆ, ಅರಸನು ದೊಡ್ಡದಾದ ಒಂದು ದಂತಸಿಂಹಾಸನವನ್ನು ಮಾಡಿಸಿ ಅದನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು;</verse>
				<verse number="19">ಅದಕ್ಕೆ ಆರು ಮೆಟ್ಟಲುಗಳಿದ್ದವು. ಅದರ ಹಿಂಭಾಗದ ತುದಿ ಚಕ್ರಾಕಾರವಾಗಿತ್ತು. ಆಸನಕ್ಕೆ ಎರಡು ಕೈಗಳೂ, ಅವುಗಳ ಹತ್ತಿರ ಎರಡು ಸಿಂಹಗಳೂ ಇದ್ದವು.</verse>
				<verse number="20">ಆರು ಮೆಟ್ಟಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು; ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.</verse>
				<verse number="21">ಅರಸ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು; ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರದ ಸಾಮಾನುಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯಿರಲಿಲ್ಲ. ಆದುದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ.</verse>
				<verse number="22">ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷಿಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.</verse>
				<verse number="23">ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿ ಇದ್ದನು.</verse>
				<verse number="24">ಭೂಲೋಕದವರೆಲ್ಲರೂ, ದೇವರು ಅವನಿಗೆ ಅನುಗ್ರಹಿಸಿದ್ದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಅವನ ದರ್ಶನಕ್ಕೆ ಬರುತ್ತಿದ್ದರು.</verse>
				<verse number="25">ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.</verse>
				<verse number="26">ಸೊಲೊಮೋನನು ರಥಗಳನ್ನೂ ರಾಹುತರನ್ನೂ ಸಂಗ್ರಹಿಸುತ್ತಿದ್ದನು. ಅವನ ರಥಗಳು ಸಾವಿರದ ನಾನೂರು; ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಜೆರುಸಲೇಮಿನಲ್ಲಿ ತನ್ನ ಬಳಿಯಲ್ಲೇ ಇರಿಸಿದ್ದನು; ಉಳಿದವುಗಳನ್ನು ರಥಗಳಿಗಾಗಿಯೇ ನೇಮಿಸಿದ್ದ ಪಟ್ಟಣಗಳಲ್ಲಿ ಇರಿಸಿದ್ದನು.</verse>
				<verse number="27">ಅವನ ಕಾಲದಲ್ಲಿ ಜೆರುಸಲೇಮಿನಲ್ಲಿದ್ದ ಬೆಳ್ಳಿಯು ಕಲ್ಲಿನಂತೆ ಹಾಗು ದೇವದಾರು ಮರಗಳು ಇಳಕಲ್ಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆ ವಿಪುಲವಾಗಿದ್ದವು.</verse>
				<verse number="28">ಅರಸ ಸೊಲೊಮೋನನ ಕುದುರೆಗಳು ಈಜಿಪ್ಟ್ ದೇಶದವುಗಳು; ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಳೆಯಾಗಿ ಕೊಂಡುಕೊಂಡು ಬರುತ್ತಿದ್ದರು.</verse>
				<verse number="29">ಈಜಿಪ್ಟ್ ದೇಶದಿಂದ ರಥಗಳನ್ನೂ ಕುದುರೆಗಳನ್ನೂ ತರಿಸಬೇಕಾದರೆ ಪ್ರತಿಯೊಂದು ರಥಕ್ಕೆ ಆರುನೂರು ಬೆಳ್ಳಿನಾಣ್ಯಗಳನ್ನೂ ಕುದುರೆಗೆ ನೂರೈವತ್ತು ಬೆಳ್ಳಿನಾಣ್ಯಗಳನ್ನೂ ಕೊಡಬೇಕಾಗಿತ್ತು. ಅವು ಹಿತ್ತಿಯರ ಮತ್ತು ಸಿರಿಯಾದವರ ಎಲ್ಲಾ ಅರಸರಿಗೆ ಇವರ ಮುಖಾಂತರವೇ ಮಾರಾಟವಾಗುತ್ತಿದ್ದವು.</verse>
			</chapter>
			<chapter number="11">
				<verse number="1">ಅರಸ ಸೊಲೊಮೋನನು ಫರೋಹನ ಮಗಳನ್ನಲ್ಲದೆ, ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೀದೋನ್ಯರು, ಹಿತ್ತಿಯರು ಎಂಬೀ ಜನಾಂಗಗಳ ಮಹಿಳೆಯರನ್ನೂ ಮೋಹಿಸಿದನು.</verse>
				<verse number="2">ಸರ್ವೇಶ್ವರ ಈ ಜನಾಂಗಗಳ ವಿಷಯದಲ್ಲಿ ಇಸ್ರಯೇಲರಿಗೆ, “ನಿಮಗೂ ಅವರಿಗೂ ಕೊಟ್ಟುಕೊಳ್ಳುವ ಸಂಬಂಧ ಇರಕೂಡದು; ಹೀಗೆ ವಿವಾಹ ಸಂಬಂಧವಾಗುವುದಾದರೆ ಅವರು ನಿಮ್ಮ ಮನಸ್ಸನ್ನು ತಮ್ಮ ದೇವತೆಗಳ ಕಡೆಗೆ ತಿರುಗಿಸಬಹುದು,” ಎಂದು ಎಚ್ಚರಿಸಿದ್ದರು. ಆದರೂ ಸೊಲೊಮೋನನು ಅವರ ಮಹಿಳೆಯರಲ್ಲಿ ಅನುರಕ್ತನಾಗಿದ್ದನು.</verse>
				<verse number="3">ಅವನಿಗೆ ರಾಜವಂಶದವರಾದ ಏಳುನೂರು ಮಂದಿ ಪತ್ನಿಯರಲ್ಲದೆ ಮುನ್ನೂರು ಮಂದಿ ಉಪಪತ್ನಿಯರಿದ್ದರು. ಈ ಮಹಿಳೆಯರು ಅವನ ಮನಸ್ಸನ್ನು ಕೆಡಿಸಿಬಿಟ್ಟರು.</verse>
				<verse number="4">ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣ ಅವನು ತನ್ನ ದೇವರಾದ ಸರ್ವೇಶ್ವರನಲ್ಲಿಟ್ಟಿದ್ದ ಯಥಾರ್ಥ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.</verse>
				<verse number="5">ಸಿದೋನ್ಯರ ಅಷ್ಟೋರೆತ್ ದೇವತೆಯನ್ನೂ ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನೂ ಆರಾಧಿಸತೊಡಗಿದನು.</verse>
				<verse number="6">ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು; ಅವನ ತಂದೆ ದಾವೀದನು ಪೂರ್ಣಮನಸ್ಸಿನಿಂದ ಸರ್ವೇಶ್ವರನನ್ನು ಸೇವೆಮಾಡಿದಂತೆ ಅವನು ಸೇವೆಮಾಡಲಿಲ್ಲ.</verse>
				<verse number="7">ಅವನು ಜೆರುಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಏರ್ಪಡಿಸಿದನು.</verse>
				<verse number="8">ಈ ಪ್ರಕಾರ ಅನ್ಯಜನಾಂಗಗಳಿಂದ ಬಂದ ತನ್ನ ಹೆಂಡತಿಯರು ತಮ್ಮ ದೇವತೆಗಳಿಗೆ ಧೂಪಾರತಿ ಎತ್ತುವುದಕ್ಕೂ ಬಲಿ ಅರ್ಪಿಸುವುದಕ್ಕೂ ಅನುಕೂಲ ಮಾಡಿಕೊಟ್ಟನು.</verse>
				<verse number="9">ಸೊಲೊಮೋನನಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರ ಎರಡು ಸಾರಿ ಕಾಣಿಸಿಕೊಂಡು,</verse>
				<verse number="10">ಅನ್ಯದೇವತೆಗಳನ್ನು ಪೂಜಿಸಲೇಬಾರದೆಂದು ಆಜ್ಞಾಪಿಸಿದ್ದರೂ ಅವನು ಅವರ ಆಜ್ಞೆಗಳನ್ನು ಮೀರಿದನು.</verse>
				<verse number="11">ಆದ್ದರಿಂದ ಸರ್ವೇಶ್ವರ ಅವನ ಮೇಲೆ ಕೋಪಗೊಂಡು, “ನೀನು ಹೀಗೆ ಮಾಡಿ ನನ್ನ ನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ಕಿತ್ತುಕೊಂಡು ನಿನ್ನ ದಾಸನಿಗೆ ಕೊಡುವೆನು.</verse>
				<verse number="12">ಆದರೂ ನಾನು ನಿನ್ನ ತಂದೆ ದಾವೀದನನ್ನು ಸ್ಮರಿಸಿ, ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು.</verse>
				<verse number="13">ಆದರೆ ಇಡೀ ಸಾಮ್ರಾಜ್ಯವನ್ನು ಕಿತ್ತುಕೊಳ್ಳುವುದಿಲ್ಲ; ನನ್ನ ದಾಸ ದಾವೀದನ ನಿಮಿತ್ತ ಹಾಗು ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣದ ನಿಮಿತ್ತ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು,” ಎಂದು ಸರ್ವೇಶ್ವರ ಹೇಳಿದರು.</verse>
				<verse number="14">ಎದೋಮ್ಯನೂ ರಾಜಪುತ್ರನೂ ಆದ ಹದದನನ್ನು ಸೊಲೊಮೋನನಿಗೆ ವಿರುದ್ಧ ದಂಗೆಯೇಳುವಂತೆ ಮಾಡಿದರು ಸರ್ವೇಶ್ವರ.</verse>
				<verse number="15">ದಾವೀದನಿಗೂ ಎದೋಮ್ಯರಿಗೂ ಯುದ್ಧ ನಡೆಯುತ್ತಿರುವಾಗ ಸೇನಾಪತಿಯಾದ ಯೋವಾಬನು ಇಸ್ರಯೇಲ್ ಸರ್ವಸೈನ್ಯದೊಡನೆ ಅಲ್ಲಿಗೆ ಹೋಗಿ ಹತರಾದ ಇಸ್ರಯೇಲರನ್ನು ಸಮಾಧಿಮಾಡಿದನು.</verse>
				<verse number="16">ಆರು ತಿಂಗಳು ಅಲ್ಲಿಯೇ ಇದ್ದು ಎದೋಮ್ಯರ ಎಲ್ಲ ಗಂಡಸರನ್ನು ಸಂಹರಿಸಿದನು.</verse>
				<verse number="17">ಆ ಸಮಯದಲ್ಲಿ ಬಾಲಕನಾದ ಹದದನು ತನ್ನ ತಂದೆಯ ಸೇವಕರಾದ ಕೆಲವು ಮಂದಿ ಎದೋಮ್ಯರ ಜೊತೆಯಲ್ಲಿ ಈಜಿಪ್ಟಿಗೆ ಓಡಿಹೋಗಬೇಕೆಂದು ಹೊರಟನು.</verse>
				<verse number="18">ಅವರು ಮೊದಲು ಮಿದ್ಯಾನಿಗೂ ಆಮೇಲೆ ಪಾರಾನಿಗೂ ಬಂದರು. ಅಲ್ಲಿಂದ ಕೆಲವುಮಂದಿ ಪಾರಾನಿನ ಜನರನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಈಜಿಪ್ಟಿನ ಅರಸ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಆಹಾರವನ್ನು, ಮನೆಯನ್ನು ಹಾಗು ಭೂಮಿಯನ್ನು ಕೊಟ್ಟನು.</verse>
				<verse number="19">ಹದದನು ಫರೋಹನ ವಿಶೇಷ ದಯೆಗೆ ಪಾತ್ರನಾದನು. ಫರೋಹನು ತನ್ನ ಹೆಂಡತಿಯೂ ರಾಣಿಯೂ ಆದ ತಖ್ಪೆನೇಸ್ ಎಂಬಾಕೆಯ ತಂಗಿಯನ್ನು ಇವನಿಗೆ ಮದುವೆ ಮಾಡಿಕೊಟ್ಟನು.</verse>
				<verse number="20">ಆಕೆಯಲ್ಲಿ ಇವನಿಗೆ ಗೆನುಬತ್ ಎಂಬ ಮಗನು ಹುಟ್ಟಿದನು. ತಖ್ಪೆನೇಸಳು ಆ ಹುಡುಗನನ್ನು ಫರೋಹನ ಮನೆಯಲ್ಲೇ ಸಾಕಿದಳು; ಅಲ್ಲಿ ಇವನು ಫರೋಹನ ಕುಮಾರರ ಜೊತೆಯಲ್ಲಿದ್ದನು.</verse>
				<verse number="21">ದಾವೀದನು ಸತ್ತು ಪಿತೃಗಳ ಬಳಿಗೆ ಸೇರಿದನೆಂದೂ ಸೇನಾಪತಿಯಾದ ಯೋವಾಬನು ಮೃತನಾದನೆಂದೂ ಈಜಿಪ್ಟಿನಲ್ಲಿದ್ದ ಹದದನು ಕೇಳಿದನು. ಫರೋಹನಿಗೆ ಅವನು, “ನಾನು ಸ್ವದೇಶಕ್ಕೆ ಹೋಗಬೇಕೆಂದಿರುತ್ತೇನೆ; ಅಪ್ಪಣೆಕೊಡಿ,” ಎಂದನು.</verse>
				<verse number="22">ಫರೋಹನು, “ನನ್ನ ಬಳಿಯಲ್ಲಿ ನಿನಗೇನು ಕೊರತೆಯಾಯಿತು? ಸ್ವದೇಶಕ್ಕೆ ಹೋಗಬೇಕೆಂದು ಏಕೆ ಆಶಿಸುತ್ತಿ?” ಎಂದು ಕೇಳಿದನು. ಅವನು, “ಏನೂ ಕೊರತೆಯಾಗಿಲ್ಲ; ಆದರೂ ನನಗೆ ಹೋಗುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಉತ್ತರಕೊಟ್ಟನು. ಹದದನು ತನ್ನ ಊರಿಗೆ ಮರಳಿದನು.</verse>
				<verse number="23">ಸೊಲೊಮೋನನಿಗೆ ವಿರುದ್ಧ ದೇವರು ಎಬ್ಬಿಸಿದ ಎರಡನೆಯ ವೈರಿ ಎಲ್ಯಾದಾವನ ಮಗ ರೆಜೋನ್ ಎಂಬವನು.</verse>
				<verse number="24">ದಾವೀದನು ಚೋಬದವರನ್ನು ಸಂಹರಿಸಿದಾಗ ಈ ರೆಜೋನನು ಚೋಬದ ಅರಸನೂ ತನ್ನ ಒಡೆಯನೂ ಆದ ಹದದೆಜೆರನನ್ನು ಬಿಟ್ಟು ಓಡಿಹೋಗಿ, ಕೆಲವು ಮಂದಿಯನ್ನು ಕೂಡಿಸಿಕೊಂಡು, ತಾನು ಅವರ ನಾಯಕನಾಗಿ, ಅವರೊಡನೆ ದಮಸ್ಕಕ್ಕೆ ಬಂದು ಅಲ್ಲಿ ಅರಸನಾದನು.</verse>
				<verse number="25">ಸೊಲೊಮೋನನ ಜೀವಮಾನದಲ್ಲೆಲ್ಲಾ ಇಸ್ರಯೇಲರಿಗೆ ಮಹಾಬಾಧಕನಾದ ಹದದನ ಜೊತೆಗೆ ಇವನೂ ವೈರಿಯಾಗಿದ್ದನು. ಇವನು ಸಿರಿಯಾ ದೇಶದಲ್ಲಿ ಅರಸನಾಗಿ ಇಸ್ರಯೇಲರನ್ನು ಬಹಳವಾಗಿ ದ್ವೇಷಿಸಿದನು.</verse>
				<verse number="26">ಅರಸ ಸೊಲೊಮೋನನಿಗೆ ವಿರುದ್ಧ ದಂಗೆ ಎದ್ದವರಲ್ಲಿ, ಅವನ ಸೇವಕನೂ ಚರೇದ ಊರಿನ ಎಫ್ರಯೀಮ್ಯನಾದ ನೆಬಾಟನ ಮಗನೂ ಆಗಿದ್ದ, ಯಾರೊಬ್ಬಾಮ ಎಂಬವನು ಮತ್ತೊಬ್ಬನು. ಚೆರೂಗಳೆಂಬ ವಿಧವೆ ಅವನ ತಾಯಿ.</verse>
				<verse number="27">ಅವನು ದಂಗೆಯೆದ್ದ ವಿವರಣೆ ಹೀಗಿದೆ: ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆ ದಾವೀದನ ಪಟ್ಟಣದ ದುರ್ಬಲ ಸ್ಥಳವನ್ನು ಭದ್ರಪಡಿಸುತ್ತಿರುವಾಗ</verse>
				<verse number="28">ಯೌವನಸ್ಥನಾದ ಯಾರೊಬ್ಬಾಮನು ಬಹುಸಾಮರ್ಥ್ಯದಿಂದ ಕೆಲಸಮಾಡುತ್ತಿರುವುದನ್ನು ಕಂಡು ಅವನನ್ನು ಜೋಸೆಫ್ಯರ ಎಲ್ಲಾ ಆಳುಗಳ ಮೇಲೆ ಮೇಸ್ತ್ರಿಯನ್ನಾಗಿ ನೇಮಿಸಿದನು.</verse>
				<verse number="29">ಒಂದು ದಿವಸ ಯಾರೊಬ್ಬಾಮನು ಜೆರುಸಲೇಮಿನಿಂದ ಎಲ್ಲಿಗೋ ಹೋಗುತ್ತಿರುವಾಗ ಅಡವಿಯಲ್ಲಿ ಶಿಲೋವಿನವನಾದ ಅಹೀಯನೆಂಬ ಪ್ರವಾದಿ ಅವನಿಗೆ ಎದುರಾದನು. ಇವನು ಹೊಸ ಬಟ್ಟೆಯನ್ನು ಹೊದ್ದುಕೊಂಡಿದ್ದನು. ಅಲ್ಲಿ ಇವರಿಬ್ಬರ ಹೊರತಾಗಿ ಬೇರೆ ಯಾರೂ ಇರಲಿಲ್ಲ.</verse>
				<verse number="30">ಆಗ ಅಹೀಯನು, ತಾನು ಹೊದ್ದುಕೊಂಡಿದ್ದ ಹೊಸ ಬಟ್ಟೆಯನ್ನು ತೆಗೆದುಕೊಂಡು, ಅದನ್ನು ಹರಿದು ಹನ್ನೆರಡು ತುಂಡುಮಾಡಿ,</verse>
				<verse number="31">ಯಾರೊಬ್ಬಾಮನಿಗೆ, “ನೀನು ಇವುಗಳಲ್ಲಿ ಹತ್ತು ತುಂಡುಗಳನ್ನು ತೆಗೆದುಕೋ. ಇಸ್ರಯೇಲ್ ದೇವರಾದ ಸರ್ವೆಶ್ವರ ರಾಜ್ಯವನ್ನು ಸೊಲೊಮೋನನಿಂದ ಕಿತ್ತುಕೊಂಡು</verse>
				<verse number="32">ತನ್ನ ದಾಸ ದಾವೀದನ ನಿಮಿತ್ತ ಹಾಗು ತಾವು ಇಸ್ರಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಜೆರುಸಲೇಮ್ ಪಟ್ಟಣದ ನಿಮಿತ್ತ ಅವನಿಗೆ ಒಂದೇ ಒಂದು ಕುಲವನ್ನು ಉಳಿಸಿ, ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆಂದು ಹೇಳಿದ್ದಾರೆ.</verse>
				<verse number="33">ಇದಲ್ಲದೆ, ಅವರು ನಿನಗೆ, ‘ಸೊಲೊಮೋನನೂ ಅವನ ಮನೆಯವರೂ ನನ್ನನ್ನು ಬಿಟ್ಟು ಸಿದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ ಕೆಮೋಷ್, ಅಮ್ಮೋನಿಯರ ದೇವತೆಯಾದ ಮಿಲ್ಕೋಮ್ ಇವುಗಳನ್ನು ಆರಾಧಿಸುತ್ತಿದ್ದಾರೆ. ಅವರ ತಂದೆ ದಾವೀದನು ನನ್ನ ನಿಯಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡೆಯದೆಹೋದದ್ದೂ ಇದಕ್ಕೆ ಕಾರಣ.</verse>
				<verse number="34">ಆದರೂ ನಾನು ಸೊಲೊಮೋನನಿಂದ ಸಾಮ್ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ; ನನ್ನ ಆಜ್ಞಾವಿಧಿಗಳನ್ನು ಕೈಕೊಂಡವನೂ ನಾನು ಆರಿಸಿಕೊಂಡ ದಾಸನೂ ಆದ ದಾವೀದನ ನಿಮಿತ್ತ ಅವನನ್ನು ಅವನ ಜೀವಮಾನದಲ್ಲೆಲ್ಲಾ ಅರಸನನ್ನಾಗಿಯೇ ಇರಿಸುವೆನು.</verse>
				<verse number="35">ಆದರೆ, ಅವನ ಮಗನ ಕೈಯಿಂದ ಅದನ್ನು ಕಿತ್ತುಕೊಂಡು ನಿನಗೆ ಹತ್ತು ಕುಲಗಳನ್ನು ಕೊಡುವೆನು.</verse>
				<verse number="36">ನಾನು ನನ್ನ ಹೆಸರಿಗಾಗಿ ಆರಿಸಿಕೊಂಡ ಜೆರುಸಲೇಮ್ ಪಟ್ಟಣದಲ್ಲಿ ನನ್ನ ದಾಸ ದಾವೀದನ ದೀಪ ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.</verse>
				<verse number="37">ನಾನು ನಿನ್ನನ್ನು ಇಸ್ರಯೇಲರ ಅರಸನನ್ನಾಗಿ ನೇಮಿಸುವೆನು; ನೀನು ಅವರನ್ನು ಇಷ್ಟದ ಪ್ರಕಾರ ಆಳಬಹುದು.</verse>
				<verse number="38">ನನ್ನ ದಾಸ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ, ನೀನೂ ನನ್ನ ಆಜ್ಞೆಗಳನ್ನು ಕೈಗೊಂಡು, ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸಿದರೆ, ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು; ಇಸ್ರಯೇಲ್ ರಾಜ್ಯ ನಿನ್ನ ಪಾಲಾಗುವುದು.</verse>
				<verse number="39">ದಾವೀದನ ಸಂತಾನದವರನ್ನು ಅವರ ಪಾಪದ ನಿಮಿತ್ತ ತಲೆ ತಗ್ಗಿಸುವಂತೆ ಮಾಡುವೆನು. ಆದರೆ ಸದಾಕಾಲಕ್ಕೂ ಅಲ್ಲ, ಎಂದು ಹೇಳಿದ್ದಾರೆ,” ಎಂದನು.</verse>
				<verse number="40">ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲುವುದಕ್ಕೆ ಪ್ರಯತ್ನಿಸಿದಾಗ ಅವನು ತಪ್ಪಿಸಿಕೊಂಡು, ಈಜಿಪ್ಟಿನ ಅರಸ ಶೀಶಕನ ಬಳಿಗೆ ಹೋಗಿ, ಸೊಲೊಮೋನನು ಜೀವದಿಂದಿರುವವರೆಗೆ ಅಲ್ಲಿಯೇ ಇದ್ದನು.</verse>
				<verse number="41">ಸೊಲೊಮೋನನ ಉಳಿದ ಸಾಧನೆಗಳನ್ನು ಹಾಗು ಅವನ ಜ್ಞಾನವನ್ನು ಕುರಿತು ‘ಸೊಲೊಮೋನನ ಚರಿತ್ರೆ’ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.</verse>
				<verse number="42">ಅವನು ಜೆರುಸಲೇಮಿನಲ್ಲಿದ್ದುಕೊಂಡು, ಎಲ್ಲಾ ಇಸ್ರಯೇಲರನ್ನು ನಾಲ್ವತ್ತು ವರ್ಷ ಆಳಿ, ನಿಧನನಾಗಿ, ಪಿತೃಗಳ ಬಳಿಗೆ ಸೇರಿದನು.</verse>
				<verse number="43">ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ರೆಹಬ್ಬಾಮನು ಅರಸನಾದನು.</verse>
			</chapter>
			<chapter number="12">
				<verse number="1">ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಇಸ್ರಯೇಲರೆಲ್ಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಕೂಡಿಬಂದಿದ್ದರು.</verse>
				<verse number="2">ಅರಸ ಸೊಲೊಮೋನನಿಂದ ತಪ್ಪಿಸಿಕೊಂಡು ಈಜಿಪ್ಟಿಗೆ ಓಡಿಹೋಗಿದ್ದ ನೆಬಾಟನ ಮಗ ಯಾರೊಬ್ಬಾಮನನ್ನು ಕರೆಸಿಕೊಂಡಿದ್ದರು.</verse>
				<verse number="3">ಯಾರೊಬ್ಬಾಮನು ನಡೆದ ಸಂಗತಿಗಳನ್ನು ಕೇಳಿ, ಎಲ್ಲಾ ಇಸ್ರಯೇಲರೊಡನೆ ರೆಹಬ್ಬಾಮನ ಬಳಿಗೆ ಹೋಗಿ,</verse>
				<verse number="4">“ನಿಮ್ಮ ತಂದೆ ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದ್ದರು; ಅವರು ನೇಮಿಸಿದ್ದ ಬಿಟ್ಟೀ ಕೆಲಸವನ್ನು ನೀನು ಕಡಿಮೆಮಾಡಿ, ನಮ್ಮ ಮೇಲಿರುವ ಭಾರವನ್ನು ಹಗುರಮಾಡುವುದಾದರೆ ನಾವು ನಿನಗೆ ಸೇವೆಮಾಡುತ್ತೇವೆ,” ಎಂದನು.</verse>
				<verse number="5">ಅವನು, “ನೀವು ಈಗ ಹೋಗಿ ಮೂರು ದಿನಗಳಾದ ನಂತರ ಮತ್ತೆ ಬನ್ನಿ,” ಎಂದು ಉತ್ತರಕೊಟ್ಟನು. ಜನರು ಹೊರಟುಹೋದರು.</verse>
				<verse number="6">ಆಗ ಅರಸ ರೆಹಬ್ಬಾಮನು ತನ್ನ ತಂದೆ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ, ತಾನು ಜನರಿಗೆ ಕೊಡಬೇಕಾದ ಉತ್ತರದ ಬಗ್ಗೆ ಅವರ ಆಲೋಚನೆಯನ್ನು ಕೇಳಿದನು.</verse>
				<verse number="7">ಅವರು, “ನೀವು ಈ ದಿನ ಜನರ ಮಾತನ್ನು ಕೇಳಿ ಅವರಿಗೆ ವಿನಯರಾಗಿ, ಒಳ್ಳೆಯ ಉತ್ತರಕೊಟ್ಟರೆ ಅವರು ಯಾವಾಗಲೂ ನಿಮಗೆ ಅಧೀನರಾಗಿರುವರು,” ಎಂದರು.</verse>
				<verse number="8">ಆದರೆ ಅವನು ಆ ಹಿರಿಯರ ಆಲೋಚನೆಯನ್ನು ನಿರಾಕರಿಸಿದನು. ತನ್ನ ಸಂಗಡ ಬೆಳೆದು ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರೆಸಿದನು.</verse>
				<verse number="9">ನನ್ನ ತಂದೆ ಹೇರಿದ ನೊಗವನ್ನು ಹಗುರ ಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.</verse>
				<verse number="10">ಅವರು ಅವನಿಗೆ, “ನಿಮ್ಮ ತಂದೆ ನಮ್ಮ ಮೇಲೆ ಹೇರಿರುವ ನೊಗವನ್ನು ಹಗುರ ಮಾಡು ಎಂದು ನಿಮ್ಮನ್ನು ಬೇಡಿಕೊಂಡ ಜನರಿಗೆ ನೀವು, ‘ನನ್ನ ತಂದೆಯ ಸೊಂಟಕ್ಕಿಂತ ನನ್ನ ಈ ಕಿರಿಬೆರಳು ದಪ್ಪ;</verse>
				<verse number="11">ನನ್ನ ತಂದೆ ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವರು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು,’ ಎಂಬುದಾಗಿ ಹೇಳಬೇಕು,” ಎಂದು ಉತ್ತರಕೊಟ್ಟರು.</verse>
				<verse number="12">ಯಾರೊಬ್ಬಾಮನೂ ಜನರೆಲ್ಲರೂ ಅರಸ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನ ಪುನಃ ಅವನ ಬಳಿಗೆ ಬಂದರು.</verse>
				<verse number="13">ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ, ಯೌವನಸ್ಥರ ಆಲೋಚನೆಗನುಸಾರ ಜನರಿಗೆ,</verse>
				<verse number="14">“ನನ್ನ ತಂದೆ ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು; ಅವರು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ಮುಳ್ಳುಕೊರಡೆಗಳಿಂದ ದಂಡಿಸುವೆನು,” ಎಂದು ನುಡಿದನು.</verse>
				<verse number="15">ಅವನು ಜನರ ಮಾತನ್ನು ಕೇಳದೆಹೋದದ್ದು ಸರ್ವೇಶ್ವರನಿಂದಲೇ ಸಂಭವಿಸಿತ್ತು. ಹೀಗೆ ಸರ್ವೇಶ್ವರ ಶಿಲೋವಿನವನಾದ ಅಹೀಯನ ಮುಖಾಂತರ ನೆಬಾಟನ ಮಗ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.</verse>
				<verse number="16">ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲ ಎಂದು ನೋಡಿ ಇಸ್ರಯೇಲರೆಲ್ಲರೂ ಅವನಿಗೆ, “ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ; ಜೆಸ್ಸೆಯ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ; ಇಸ್ರಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ತೆರಳಿರಿ; ದಾವೀದನವರು ತಮ್ಮ ಕುಲವನ್ನು ತಾವೇ ನೋಡಿಕೊಳ್ಳಲಿ!” ಎಂದು ಹೇಳಿ ತಮ್ಮ ಮನೆಗಳಿಗೆ ಹೊರಟುಹೋದರು.</verse>
				<verse number="17">ಜುದೇಯ ಪ್ರಾಂತ್ಯದಲ್ಲಿದ್ದ ಇಸ್ರಯೇಲರಾದರೋ ರೆಹಬ್ಬಾಮನ ಅಧೀನದಲ್ಲಿದ್ದರು.</verse>
				<verse number="18">ರೆಹಬ್ಬಾಮನು ಬಿಟ್ಟೀ ಕೆಲಸದವರ ಮೇಲ್ವಿಚಾರಕನಾದ ಅದೋರಾಮನನ್ನು ಇಸ್ರಯೇಲರ ಬಳಿಗೆ ಕಳುಹಿಸಿದಾಗ ಅವರು ಅವನನ್ನು ಕಲ್ಲೆಸೆದು ಕೊಂದರು. ಅರಸ ರೆಹಬ್ಬಾಮನು ಬೇಗನೇ ರಥವನ್ನೇರಿ ಜೆರುಸಲೇಮಿಗೆ ಓಡಿಹೋದನು.</verse>
				<verse number="19">ಇಸ್ರಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ.</verse>
				<verse number="20">ಯಾರೊಬ್ಬಾಮನು ಹಿಂದಿರುಗಿ ಬಂದು ಇದ್ದಾನೆಂಬ ಸಮಾಚಾರ ಇಸ್ರಯೇಲರಿಗೆ ಗೊತ್ತಾದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.</verse>
				<verse number="21">ಸೊಲೊಮೋನನ ಮಗ ರೆಹಬ್ಬಾಮನು ಜೆರುಸಲೇಮನ್ನು ಮುಟ್ಟಿದನಂತರ ಇಸ್ರಯೇಲರಿಗೆ ವಿರುದ್ಧ ಯುದ್ಧಮಾಡುವುದಕ್ಕೂ ರಾಜ್ಯವನ್ನು ಮರಳಿ ತನಗೆ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಒಂದು ಲಕ್ಷದ ಎಂಬತ್ತು ಸಾವಿರ ಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.</verse>
				<verse number="22">ಆಗ ದೈವಪುರುಷನಾದ ಶೆಮಾಯನಿಗೆ ಈ ದೈವವಾಣಿ ಕೇಳಿಸಿತು.</verse>
				<verse number="23">“ನೀನು ಹೋಗಿ ಸೊಲೊಮೋನನ ಮಗನೂ ಜುದೇಯದ ಅರಸನೂ ಆದ ರೆಹಬ್ಬಾಮನಿಗೂ ಯೆಹೂದ ಬೆನ್ಯಾಮೀನ್ ಕುಲಗಳವರಿಗೂ ಹಾಗು ಉಳಿದ ಜನರಿಗೂ ಹೀಗೆಂದು ಹೇಳು: ಸರ್ವೇಶ್ವರನ ಮಾತನ್ನು ಕೇಳಿರಿ:</verse>
				<verse number="24">ನೀವು ನಿಮ್ಮ ಸಹೋದರರಾದ ಇಸ್ರಯೇಲರೊಡನೆ ಯುದ್ಧಮಾಡಲು ಹೋಗಬಾರದು; ಎಲ್ಲರೂ ಹಿಂದಿರುಗಿ ಹೋಗಿರಿ; ಈ ವಿಭಜನಾಕಾರ್ಯ ಸರ್ವೇಶ್ವರನಿಂದಾಗಿದೆ, ಎಂದು ಹೇಳಬೇಕು.” ಅಂತೆಯೇ ಆ ಜನರು ಸರ್ವೇಶ್ವರನ ಮಾತನ್ನು ಕೇಳಿ ಹಿಂದಿರುಗಿ ಹೋದರು.</verse>
				<verse number="25">ಯಾರೊಬ್ಬಾಮನು ಎಫ್ರಯಿಮ್ ಮಲೆನಾಡಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.</verse>
				<verse number="26">ಅವನು ತನ್ನಲ್ಲೇ, “ರಾಜ್ಯವು ಮತ್ತೆ ದಾವೀದನ ಕುಟುಂಬದವರಿಗೆ ಆಗುವುದೋ ಏನೋ;</verse>
				<verse number="27">ಜನರು ಜೆರುಸಲೇಮಿನಲ್ಲಿರುವ ಸರ್ವೇಶ್ವರನ ಆಲಯಕ್ಕೆ ಬಲಿಯರ್ಪಣೆಗಾಗಿ ಹೋದರೆ ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗಬಹುದು; ಅವರು ನನ್ನನ್ನು ಕೊಂದು ಅವನ ಬಳಿಗೆ ಹೋಗಬಹುದು,” ಎಂದುಕೊಂಡನು.</verse>
				<verse number="28">ಬಹಳವಾಗಿ ಆಲೋಚಿಸಿ, ಕಡೆಗೆ ಬಂಗಾರದ ಎರಡು ಹೋರಿಕರುಗಳ ಮೂರ್ತಿಗಳನ್ನು ಮಾಡಿಸಿ, ಇಸ್ರಯೇಲರಿಗೆ, “ನೀವು ಜಾತ್ರೆಗಾಗಿ ಜೆರುಸಲೇಮಿಗೆ ಹೋದದ್ದು ಇನ್ನು ಸಾಕು. ಇಗೋ, ನಿಮ್ಮನ್ನು ಈಜಿಪ್ಟಿನಿಂದ ಕರೆದುತಂದ ದೇವರುಗಳು ಇಲ್ಲಿರುತ್ತವೆ,” ಎಂದು ಹೇಳಿ</verse>
				<verse number="29">ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿದನು; ಇನ್ನೊಂದನ್ನು ದಾನಿಗೆ ಕಳುಹಿಸಿದನು.</verse>
				<verse number="30">ಇದು ಪಾಪಕ್ಕೆ ಕಾರಣವಾಯಿತು. ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಿಂದ ದಾನಿಗೆ ಒಯ್ದರು.</verse>
				<verse number="31">ಇದಲ್ಲದೆ, ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ, ಲೇವಿಯರಲ್ಲದ ಜನಸಾಮಾನ್ಯರನ್ನು ಯಾಜಕರನ್ನಾಗಿ ನೇಮಿಸಿದನು.</verse>
				<verse number="32">ಅವನು ಎಂಟನೆಯ ತಿಂಗಳ ಹದಿನೈದನೆಯ ದಿವಸ, ನಾಡಿನ ಜಾತ್ರೆಗೆ ಸಮನಾದ ಜಾತ್ರೆ ಬೇತೇಲಿನಲ್ಲಿ ನಡೆಯಬೇಕೆಂದು ಅಪ್ಪಣೆ ಮಾಡಿದನು. ತಾನೂ ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ್ದ ಹೋರಿಕರುಗಳ ಮೂರ್ತಿಗಳಿಗೆ, ಪೀಠದ ಮೇಲೆ ಬಲಿ ಅರ್ಪಿಸಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.</verse>
				<verse number="33">ಎಂಟನೆಯ ತಿಂಗಳ ಹದಿನೈದನೆಯ ದಿನ ಇಸ್ರಯೇಲರು ಹಬ್ಬವನ್ನಾಚರಿಸಬೇಕೆಂದು ಯಾರೊಬ್ಬಾಮನು ಸ್ವೇಚ್ಛೆಯಿಂದ ಗೊತ್ತುಮಾಡಿದನು. ಆ ಸಮಯಕ್ಕೆ ತಾನೂ ಬೇತೇಲಿನ ಬಲಿಪೀಠದ ಬಳಿಗೆ ಹೋಗಿ ಧೂಪಾರತಿ ಎತ್ತಲು ಅದರ ಮೆಟ್ಟಲುಗಳನ್ನು ಹತ್ತುತ್ತಿದ್ದನು.</verse>
			</chapter>
			<chapter number="13">
				<verse number="1">ಜುದೇಯ ನಾಡಿನವನಾದ ಒಬ್ಬ ದೈವಭಕ್ತನು ಸರ್ವೇಶ್ವರನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಾರತಿ ಎತ್ತಲು ಪೀಠದ ಹತ್ತಿರ ನಿಂತುಕೊಂಡನು.</verse>
				<verse number="2">ಆ ಭಕ್ತನು ಸರ್ವೇಶ್ವರನ ಅಪ್ಪಣೆಯಿಂದ ಆ ಪೀಠವನ್ನು ಉದ್ದೇಶಿಸಿ, “ಎಲೈ ಪೀಠವೇ, ಪೀಠವೇ, ದಾವೀದನ ಸಂತಾನದಲ್ಲಿ ಯೋಷೀಯ ಎಂಬೊಬ್ಬನು ಹುಟ್ಟುವನು. ಅವನು, ನಿನ್ನ ಮೇಲೆ ಧೂಪಸುಡುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಬಲಿಕೊಡುವನು. ಮನುಷ್ಯರ ಎಲುಬುಗಳನ್ನು ನಿನ್ನ ಮೇಲೆ ಸುಡಲಾಗುವುದು ಎಂದು ಸರ್ವೇಶ್ವರ ಹೇಳುತ್ತಾರೆ,” ಎಂದನು.</verse>
				<verse number="3">ಇದಲ್ಲದೆ, “ನನ್ನ ಮಾತು ಸರ್ವೇಶ್ವರನದು ಎಂಬುದಕ್ಕೆ ಈ ಪೀಠವು ಸೀಳಿ ಅದರ ಮೇಲಿನ ಬೂದಿ ಬಿದ್ದುಹೋಗುವುದೇ ಗುರುತಾಗಿರುವುದು,” ಎಂದು ಹೇಳಿದನು.</verse>
				<verse number="4">ಬೇತೇಲಿನ ಪೀಠದ ಬಳಿ ನಿಂತಿದ್ದ ಅರಸನು ಆ ದೈವಭಕ್ತನು ಪೀಠಕ್ಕೆ ವಿರೋಧವಾಗಿ ನುಡಿದದ್ದನ್ನು ಕೇಳಿ ಕೈಚಾಚಿ, “ಅವನನ್ನು ಹಿಡಿಯಿರಿ,” ಎಂದು ಆಜ್ಞಾಪಿಸಿದನು. ಕೂಡಲೆ ಅವನ ಕೈ ಒಣಗಿಹೋಯಿತು. ಅವನು ಅದನ್ನು ಹಿಂತೆಗೆದುಕೊಳ್ಳಲಾಗಲಿಲ್ಲ.</verse>
				<verse number="5">ಬಲಿಪೀಠವು ಸೀಳಿ ಅದರ ಮೇಲಿನ ಬೂದಿ ಬಿದ್ದುಹೋಯಿತು. ಹೀಗೆ ಆ ದೈವಭಕ್ತನು ಸರ್ವೇಶ್ವರನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.</verse>
				<verse number="6">ಅರಸನು ಆ ಭಕ್ತನಿಗೆ, “ನಿನ್ನ ದೇವರಾದ ಸರ್ವೇಶ್ವರನು ಪ್ರಸನ್ನನಾಗುವಂತೆ ಬೇಡಿಕೊ; ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಅವರನ್ನು ನನ್ನ ಪರವಾಗಿ ಪ್ರಾರ್ಥಿಸು,” ಎಂದು ಕೇಳಿದನು. ಅಂತೆಯೇ ಆ ದೈವಭಕ್ತನು ಸರ್ವೇಶ್ವರನನ್ನು ಬೇಡಿಕೊಂಡನು; ಅರಸನ ಕೈ ವಾಸಿಯಾಗಿ ಮೊದಲಿನಂತೆ ಆಯಿತು.</verse>
				<verse number="7">ಆಗ ಅರಸನು, “ನನ್ನ ಮನೆಗೆ ಬಾ; ಸ್ವಲ್ಪ ಊಟಮಾಡಿ ಸುಧಾರಿಸಿಕೊ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ,” ಎಂದನು.</verse>
				<verse number="8">ಆ ದೈವಭಕ್ತನು, “ನೀವು ನನಗೆ ನಿಮ್ಮ ಆಸ್ತಿಯಲ್ಲಿ ಅರ್ಧ ಕೊಟ್ಟರೂ ನಾನು ನಿಮ್ಮ ಸಂಗಡ ಬರುವುದಿಲ್ಲ. ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳುವುದಿಲ್ಲ.</verse>
				<verse number="9">ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಹಿಂದಿರುಗಿ ಹೋಗುವಾಗ ಬೇರೆ ದಾರಿಯಿಂದ ಹೋಗಬೇಕೆಂದೂ ನನಗೆ ಸರ್ವೇಶ್ವರನ ಅಪ್ಪಣೆಯಾಗಿದೆ,” ಎಂದನು.</verse>
				<verse number="10">ಅನಂತರ ಅವನು ಆ ದಾರಿಯನ್ನು ಬಿಟ್ಟು ಇನ್ನೊಂದು ದಾರಿಯನ್ನು ಹಿಡಿದು ಹೊರಟನು.</verse>
				<verse number="11">ಬೇತೇಲಿನಲ್ಲಿ ಒಬ್ಬ ಮುದುಕ ಪ್ರವಾದಿ ವಾಸವಾಗಿದ್ದನು. ಅವನ ಮಕ್ಕಳು ಬಂದು ಆ ದೈವಭಕ್ತನು ಆ ದಿನ ಬೇತೇಲಿನಲ್ಲಿ ಮಾಡಿದ್ದನ್ನೂ ಅವನು ಅರಸನಿಗೆ ಹೇಳಿದ್ದನ್ನೂ ತಂದೆಗೆ ತಿಳಿಸಿದರು.</verse>
				<verse number="12">“ಅವನು ಯಾವ ದಾರಿಯಿಂದ ಹೋದ?” ಎಂದು ತಂದೆ ಅವರನ್ನು ಕೇಳಲು, ಅವರು ಜುದೇಯ ನಾಡಿನ ಆ ದೈವಭಕ್ತ ಹೋದ ದಾರಿಯನ್ನು ತೋರಿಸಿದರು.</verse>
				<verse number="13">ಆಗ ಅವನು ತನ್ನ ಮಕ್ಕಳಿಗೆ, “ಕತ್ತೆಗೆ ತಡಿಹಾಕಿರಿ,” ಎಂದು ಆಜ್ಞಾಪಿಸಲು ಅವರು ಹಾಕಿದರು. ಅವನು ಕತ್ತೆಯ ಮೇಲೆ ಕುಳಿತುಕೊಂಡು</verse>
				<verse number="14">ಆ ದೈವಭಕ್ತನ ಹಿಂದೆಯೇ ಹೋಗಿ ಏಲಾವೃಕ್ಷದ ಕೆಳಗೆ ಕುಳಿತಿದ್ದ ಅವನನ್ನು ಕಂಡು, “ಜುದೇಯದಿಂದ ಬಂದ ದೈವಭಕ್ತನು ನೀನೋ?” ಎಂದು ಕೇಳಿದನು. ಅವನು ಹೌದೆಂದನು.</verse>
				<verse number="15">ಆಗ ಆ ಮುದುಕನು, “ನೀನು ನನ್ನ ಮನೆಗೆ ಬಂದು ಊಟಮಾಡು,” ಎಂದು ಹೇಳಿದನು.</verse>
				<verse number="16">ಅದಕ್ಕೆ ಅವನು, “ನಾನು ನಿನ್ನ ಸಂಗಡ ಬರಕೂಡದು; ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಬಂದ ದಾರಿಯನ್ನು ಬಿಟ್ಟು ಬೇರೆ ದಾರಿಯಿಂದ ಹಿಂದಿರುಗಿ ಹೋಗಬೇಕೆಂದೂ ನನಗೆ ಸರ್ವೇಶ್ವರನ ಅಪ್ಪಣೆಯಾಗಿದೆ,” ಎಂದು ಉತ್ತರಕೊಟ್ಟನು.</verse>
				<verse number="17"></verse>
				<verse number="18">ಆಗ ಆ ಮುದುಕನು, “ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರೆದುಕೊಂಡು ಬರಬೇಕೆಂದು ಸರ್ವೆಶ್ವರನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ,” ಎಂದು ಹೇಳಿದನು. ಆದರೆ ಈ ಮಾತು ಸುಳ್ಳಾಗಿತ್ತು.</verse>
				<verse number="19">ದೈವಭಕ್ತನು ಹಿಂದಿರುಗಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.</verse>
				<verse number="20">ಅವರು ಊಟಮಾಡುತ್ತಿರುವಾಗ ದೈವಭಕ್ತನನ್ನು ಹಿಂದಕ್ಕೆ ಕರೆದುತಂದ ಆ ಪ್ರವಾದಿಗೆ ಸರ್ವೇಶ್ವರ ಒಂದು ಸಂದೇಶವನ್ನು ದಯಪಾಲಿಸಿದರು.</verse>
				<verse number="21">ಅವನು ಜುದೇಯ ನಾಡಿನ ಆ ದೈವಭಕ್ತನಿಗೆ, “ನಿನ್ನ ದೇವರಾದ ಸರ್ವೇಶ್ವರ ನಿನಗೆ ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದು ಆಜ್ಞಾಪಿಸಿದರೂ ನೀನು ಅವರ ಆಜ್ಞೆಯನ್ನು ಮೀರಿ, ಅವಿಧೇಯನಾಗಿ</verse>
				<verse number="22">ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕಾಗಿ ಹಿಂದಿರುಗಿ ಬಂದುದರಿಂದ ನಿನ್ನ ಶವ ನಿನ್ನ ಕುಟುಂಬ ಸ್ಮಶಾನಭೂಮಿಯನ್ನು ಸೇರುವುದೇ ಇಲ್ಲವೆಂದು ಸರ್ವೇಶ್ವರ ಹೇಳುತ್ತಾರೆ,” ಎಂದನು.</verse>
				<verse number="23">ಅನ್ನಪಾನಗಳನ್ನು ತೆಗೆದುಕೊಂಡನಂತರ ಆ ಮುದುಕ ಪ್ರವಾದಿ ತಾನು ಕರೆದುತಂದ ಪ್ರವಾದಿಯನ್ನು ಕಳುಹಿಸಲು ಕತ್ತೆಗೆ ತಡಿಹಾಕಿಸಿದನು.</verse>
				<verse number="24">ಆ ದೈವಭಕ್ತನು ಸ್ವಲ್ಪ ದೂರಹೋದ ನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದುಹಾಕಿತು. ಅವನ ಶವ ದಾರಿಯಲ್ಲಿಯೇ ಬಿದ್ದಿತ್ತು; ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು.</verse>
				<verse number="25">ಹಾದುಹೋಗುವವರು ಆ ಶವವು ದಾರಿಯಲ್ಲಿ ಬಿದ್ದು ಇರುವುದನ್ನೂ ಸಿಂಹವು ಅದರ ಬಳಿಯಲ್ಲೆ ನಿಂತಿರುವುದನ್ನೂ ಕಂಡು ಮುದುಕ ಪ್ರವಾದಿಯ ಊರಿಗೆ ಬಂದು ಅದನ್ನು ತಿಳಿಸಿದರು.</verse>
				<verse number="26">ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿ, ಈ ಸುದ್ದಿಯನ್ನು ಕೇಳಿ, “ಆ ಶವವು ದೈವಭಕ್ತನದೇ ಆಗಿರಬೇಕು. ಅವನು ಸರ್ವೇಶ್ವರನ ಆಜ್ಞೆಗೆ ಅವಿಧೇಯನಾದುದರಿಂದ ಸರ್ವೇಶ್ವರ ಅವನ ವಿಷಯದಲ್ಲಿ ತಾವು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದರು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು,” ಎಂದು ಹೇಳಿ,</verse>
				<verse number="27">ಕತ್ತೆಗೆ ತಡಿಹಾಕಬೇಕೆಂದು ಮಕ್ಕಳಿಗೆ ಆಜ್ಞಾಪಿಸಿದನು. ಅವರು ಹಾಕಿದರು.</verse>
				<verse number="28">ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನೂ ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.</verse>
				<verse number="29">ಪ್ರವಾದಿಯು ಆ ದೈವಭಕ್ತನ ಶವವನ್ನು ಹೂಳಿ ಗೋಳಾಡಬೇಕೆಂದು, ಕತ್ತೆಯ ಮೇಲೆ ಹಾಕಿ,</verse>
				<verse number="30">ತನ್ನ ಊರಿಗೆ ತೆಗೆದುಕೊಂಡು ಬಂದು, ತನ್ನ ಸ್ಮಶಾನ ಭೂಮಿಯಲ್ಲಿ ಅದನ್ನು ಸಮಾಧಿಮಾಡಿದನು. ಅವರು, “ಅಯ್ಯೋ, ನನ್ನ ಸಹೋದರನೇ,” ಎಂದು ಗೋಳಾಡಿದರು.</verse>
				<verse number="31">ಅನಂತರ ಅವನು ತನ್ನ ಮಕ್ಕಳಿಗೆ, “ನಾನು ಸತ್ತಾಗ ನನ್ನ ಶವವನ್ನು ಆ ದೈವಭಕ್ತನ ಶವ ಇರುವಲ್ಲೇ ಸಮಾಧಿಮಾಡಿರಿ; ನನ್ನ ಎಲುಬುಗಳನ್ನು ಅವನ ಎಲುಬುಗಳಿರುವಲ್ಲೇ ಇಡಿ.</verse>
				<verse number="32">ಅವನು ಸರ್ವೇಶ್ವರನ ಅಪ್ಪಣೆಯಿಂದ ಬೇತೇಲಿನ ಬಲಿಪೀಠಕ್ಕೆ ವಿರುದ್ಧ ಹಾಗು ಸಮಾರಿಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳಿಗೆ ವಿರುದ್ಧ ಹೇಳಿದ ಮಾತುಗಳು ನಿಸ್ಸಂದೇಹವಾಗಿ ನೆರವೇರುವುವು,” ಎಂದನು.</verse>
				<verse number="33">ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ ಪದೇ ಪದೇ ಜನಸಾಮಾನ್ಯರನ್ನು ಉನ್ನತಸ್ಥಾನಗಳಿಗೆ ನೇಮಿಸಿದನು; ಮನಸ್ಸಿಗೆ ಬಂದವರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.</verse>
				<verse number="34">ಈ ಕಾರಣ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ವಿಸರ್ಜಿತರಾಗಿ ನಿರ್ನಾಮವಾದರು.</verse>
			</chapter>
			<chapter number="14">
				<verse number="1">ಆ ಸಮಯದಲ್ಲಿ ಯಾರೊಬ್ಬಾಮನ ಮಗ ಅಬೀಯನು ಅಸ್ವಸ್ಥನಾದನು.</verse>
				<verse number="2">ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ, “ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷಮಾರ್ಪಡಿಸಿಕೊಂಡು ಶಿಲೋವಿಗೆ ಹೋಗು. ನಾನು ಈ ಜನರಿಗೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿ ಅಹೀಯನು ಅಲ್ಲಿರುತ್ತಾನೆ.</verse>
				<verse number="3">ನೀನು ಹತ್ತು ರೊಟ್ಟಿಗಳನ್ನೂ ಸಿಹಿಪದಾರ್ಥಗಳನ್ನೂ ಒಂದು ಕುಪ್ಪಿ ಜೇನುತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು; ಹುಡುಗನಿಗೆ ಏನಾಗುವುದೆಂದು ಅವನು ತಿಳಿಸುವನು,” ಎಂದು ಹೇಳಿದನು.</verse>
				<verse number="4">ಆಕೆ ಅವನು ಹೇಳಿದಂತೆಯೇ ಮಾಡಿ ಶಿಲೋವಿನಲ್ಲಿದ್ದ ಅಹೀಯನ ಮನೆಗೆ ಹೋದಳು. ಅಹೀಯನಿಗೆ ನೋಡಲಾಗುತ್ತಿರಲಿಲ್ಲ; ಮುಪ್ಪಿನಿಂದ ಅವನ ಕಣ್ಣು ಮೊಬ್ಬಾಗಿದ್ದವು.</verse>
				<verse number="5">ಆದರೆ ಸರ್ವೇಶ್ವರ ಅವನಿಗೆ, ಯಾರೊಬ್ಬಾಮನ ಹೆಂಡತಿ ಅಸ್ವಸ್ಥನಾದ ತನ್ನ ಮಗನ ವಿಷಯದಲ್ಲಿ ದೈವೋತ್ತರವನ್ನು ಕೇಳುವುದಕ್ಕೆ ತನ್ನನ್ನು ಅನ್ಯಳೆಂದು ತೋರ್ಪಡಿಸಿಕೊಂಡು ಬರುತ್ತಾಳೆ; ಆಕೆಗೆ ಇಂಥಿಂಥ ಉತ್ತರಕೊಡು, ಎಂದು ತಿಳಿಸಿದ್ದರು.</verse>
				<verse number="6">ಆಕೆ ಅಹೀಯನ ಮನೆಯನ್ನು ಪ್ರವೇಶಿಸುವಾಗಲೇ ಅಹೀಯನು ಆಕೆಯ ಕಾಲುಸಪ್ಪಳವನ್ನು ಕೇಳಿ, “ಯಾರೊಬ್ಬಾಮನ ಹೆಂಡತಿಯೇ, ಬಾ; ಏಕೆ ನೀನು ಅನ್ಯಳೆಂದು ನಟಿಸುತ್ತಿರುವೆ? ನಿನಗೆ ಕಠಿಣವಾದ ಉತ್ತರವನ್ನು ಕೊಡಬೇಕೆಂದು ನನಗೆ ಅಪ್ಪಣೆಯಾಗಿದೆ.</verse>
				<verse number="7">ನೀನು ಹೋಗಿ ಯಾರೊಬ್ಬಾಮನಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಅಪ್ಪಣೆಯನ್ನು ತಿಳಿಸು. ಅವರು ಅವನಿಗೆ, ‘ನಾನು ನಿನ್ನನ್ನು ಜನಸಾಮಾನ್ಯರ ಮಧ್ಯದಿಂದ ಉನ್ನತ ಸ್ಥಾನಕ್ಕೆ ಏರಿಸಿದೆ; ನಿನ್ನನ್ನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನನ್ನಾಗಿ ಮಾಡಿದೆ.</verse>
				<verse number="8">ರಾಜ್ಯವನ್ನು ದಾವೀದನ ಕುಟುಂಬದವರಿಂದ ಕಿತ್ತು ನಿನಗೆ ಕೊಟ್ಟೆ. ಆದರೂ ನೀನು ನನ್ನ ದಾಸ ದಾವೀದನಂತೆ ಆಜ್ಞೆಗಳನ್ನು ಕೈಗೊಂಡು, ಪೂರ್ಣಮನಸ್ಸಿನಿಂದ ನನ್ನನ್ನು ಮೆಚ್ಚಿಸಲಿಲ್ಲ; ನನ್ನನ್ನು ಹಿಂಬಾಲಿಸಿ ನಡೆಯಲಿಲ್ಲ.</verse>
				<verse number="9">ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದೆ; ನನ್ನನ್ನು ತಿರಸ್ಕರಿಸಿ ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದೆ.</verse>
				<verse number="10">ಆದುದರಿಂದ ಯಾರೊಬ್ಬಾಮನೇ, ಕೇಳು; ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು; ನಿನ್ನ ಕುಟುಂಬದ ಗಂಡಸರಲ್ಲಿ, ಸ್ವತಂತ್ರರಾಗಲಿ, ಪರತಂತ್ರರಾಗಲಿ, ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಸಂಹರಿಸಿಬಿಡುವೆನು. ಕಸವನ್ನು ಗುಡಿಸಿ ಎಸೆಯುವಂತೆ ನಾನು ನಿನ್ನ ಮನೆಯವರನ್ನು ಎಸೆದುಬಿಡುವೆನು; ಅವರು ನಿರ್ನಾಮವಾಗುವರು.</verse>
				<verse number="11">ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ, ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ, ತಿಂದುಬಿಡುವವು,’ ಎಂದು ಹೇಳುತ್ತಾರೆ. ಇದು ಸರ್ವೇಶ್ವರನ ಮಾತು.</verse>
				<verse number="12">“ನೀನು ನಿನ್ನ ಮನೆಗೆ ಹೋಗು; ನೀನು ಪಟ್ಟಣದೊಳಗೆ ಕಾಲಿಡುವಷ್ಟರಲ್ಲಿ ಹುಡುಗನು ಸಾಯುವನು.</verse>
				<verse number="13">ಇಸ್ರಯೇಲರೆಲ್ಲರೂ ಅವನಿಗಾಗಿ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವುದರಿಂದ ಇವನೊಬ್ಬನೇ ಸಮಾಧಿಹೊಂದುವನು.</verse>
				<verse number="14">ಸರ್ವೇಶ್ವರ, ಇಸ್ರಯೇಲರ ಮೇಲೆ ಬೇರೊಬ್ಬ ಅರಸನನ್ನು ನೇಮಿಸುವರು. ಅವನು ಕೂಡಲೆ ಯಾರೊಬ್ಬಾಮನ ಮನೆಯವರನ್ನು ಸಂಹರಿಸಿಬಿಡುವನು. ಇನ್ನು ಏನೇನು ಸಂಭವಿಸುವುದೋ!</verse>
				<verse number="15">ಸರ್ವೇಶ್ವರ ಇಸ್ರಯೇಲರನ್ನು ಹೊಡೆಯುವರು. ಆಗ ಅವರು ನೀರಿನಲ್ಲಿರುವ ಆಪು ಹುಲ್ಲೋ ಎಂಬಂತೆ ಹೊಯ್ದಾಡುವರು. ಅಶೇರ ವಿಗ್ರಹಸ್ತಂಭಗಳನ್ನು ಮಾಡಿಕೊಂಡು ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದ ಅವರನ್ನು, ಅವರ ಪಿತೃಗಳಿಗೆ ಕೊಟ್ಟ ನಾಡಿನಿಂದ ಬೇರುಸಹಿತ ಕಿತ್ತುಹಾಕಿ ಯೂಫ್ರೆಟಿಸ್ ನದಿಯ ಆಚೆಯಲ್ಲಿರುವ ದೇಶದಲ್ಲೆಲ್ಲಾ ಚದರಿಸಿಬಿಡುವರು.</verse>
				<verse number="16">ಯಾರೊಬ್ಬಾಮನ ಪಾಪಗಳ ನಿಮಿತ್ತ ಹಾಗು ಅವನ ಪ್ರೇರಣೆಯಿಂದ ಇಸ್ರಯೇಲರು ಮಾಡಿದ ಪಾಪಗಳ ನಿಮಿತ್ತ ಸರ್ವೇಶ್ವರ ಅವರನ್ನು ಶತ್ರುಗಳಿಗೆ ಒಪ್ಪಿಸುವರು,” ಎಂದು ಆಕೆಗೆ ಹೇಳಿದನು.</verse>
				<verse number="17">ಯಾರೊಬ್ಬಾಮನ ಹೆಂಡತಿ ತಿರ್ಚಾ ಊರಿಗೆ ಹೊರಟುಹೋಗಿ ತನ್ನ ಮನೆಯ ಹೊಸ್ತಿಲಲ್ಲಿ ಕಾಲಿಟ್ಟಕೂಡಲೆ ಹುಡುಗನು ಸತ್ತನು.</verse>
				<verse number="18">ಸರ್ವೇಶ್ವರ ಪ್ರವಾದಿಯಾದ ಅಹೀಯನ ಮುಖಾಂತರ ತಿಳಿಸಿದಂತೆ ಎಲ್ಲಾ ಇಸ್ರಯೇಲರು ಅವನಿಗಾಗಿ ಗೋಳಾಡಿ ಅವನ ಶವವನ್ನು ಸಮಾಧಿಮಾಡಿದರು.</verse>
				<verse number="19">ಯಾರೊಬ್ಬಾಮನ ಇತರ ಕಾರ್ಯಕಲಾಪಗಳು, ಅವನ ಯುದ್ಧಗಳು ಹಾಗು ರಾಜ್ಯಭಾರಗಳ ವಿವರವು, ‘ಇಸ್ರಯೇಲ್ ರಾಜರ ಇತಿಹಾಸ’ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.</verse>
				<verse number="20">ಅವನು ಇಪ್ಪತ್ತೆರಡು ವರ್ಷ ಆಳಿ ಮೃತನಾಗಿ ಪಿತೃಗಳ ಬಳಿಗೆ ಸೇರಿದನು. ಅವನಿಗೆ ಬದಲಾಗಿ ಅವನ ಮಗ ನಾದಾಬನು ಅರಸನಾದನು.</verse>
				<verse number="21">ಸೊಲೊಮೋನನ ಮಗ ರೆಹಬ್ಬಾಮನು ಜುದೇಯದ ಅರಸನಾದನು. ಅವನು ಪಟ್ಟಕ್ಕೆ ಬಂದಾಗ ಅವನಿಗೆ ನಾಲ್ವತ್ತೊಂದು ವರ್ಷ ವಯಸ್ಸು. ಸರ್ವೆಶ್ವರ ತಮ್ಮ ಹೆಸರನ್ನು ನೆಲೆಗೊಳಿಸುವುದಕ್ಕಾಗಿ, ಇಸ್ರಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಜೆರುಸಲೇಮ್ ಪಟ್ಟಣದಲ್ಲಿ ಅವನು ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆ ಅವನ ತಾಯಿ.</verse>
				<verse number="22">ಯೆಹೂದ್ಯರು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಗಳಾದರು. ತಮ್ಮ ಪಿತೃಗಳಿಗಿಂತಲೂ ದುಷ್ಟರಾಗಿ ಸರ್ವೇಶ್ವರನನ್ನು ರೇಗಿಸಿದರು.</verse>
				<verse number="23">ಪಿತೃಗಳಂತೆಯೇ ಅವರೂ ತಮಗಾಗಿ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. ಪ್ರತಿಯೊಂದು ದಿಣ್ಣೆಯ ಮೇಲೆ ಹಾಗು ಚೆನ್ನಾಗಿ ಬೆಳೆದಿದ್ದ ಪ್ರತಿಯೊಂದು ಮರದ ಕೆಳಗೆ, ಕಲ್ಲಿನ ಕಂಬಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.</verse>
				<verse number="24">ಇದಲ್ಲದೆ, ಅವರ ನಾಡಿನಲ್ಲಿ ವೇಶ್ಯಾವೃತ್ತಿಯನ್ನು ಅನುಸರಿಸುತ್ತಿದ್ದ ಗಂಡಸರೂ ಹೆಂಗಸರೂ ಇದ್ದರು. ಅವರ ನಾಡಿನಿಂದ ಸರ್ವೇಶ್ವರ ಹೊರಡಿಸಿಬಿಟ್ಟಿದ್ದ ಅನ್ಯಜನಾಂಗಗಳ ದುರಾಚಾರಗಳನ್ನೆಲ್ಲಾ ಅವರೂ ನಡೆಸುತ್ತಿದ್ದರು.</verse>
				<verse number="25">ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಈಜಿಪ್ಟಿನ ಅರಸ ಶೀಶಕನು ಜೆರುಸಲೇಮಿನ ಮೇಲೆ ದಾಳಿಮಾಡಿದನು.</verse>
				<verse number="26">ಸರ್ವೇಶ್ವರನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನು ಹಾಗು ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ದೋಚಿಕೊಂಡು ಹೋದನು.</verse>
				<verse number="27">ಅರಸ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದ್ದನು.</verse>
				<verse number="28">ಅರಸನು ಸರ್ವೇಶ್ವರನ ಆಲಯಕ್ಕೆ ಹೋಗುವಾಗಲೆಲ್ಲಾ ಅವರು ಆ ಗುರಾಣಿಗಳನ್ನು ಹಿಡಿದುಕೊಳ್ಳುತ್ತಿದ್ದರು. ಅಲ್ಲಿಂದ ಹಿಂದಕ್ಕೆ ಬಂದ ಮೇಲೆ ಅವುಗಳನ್ನು ತಮ್ಮ ಕೋಣೆಯಲ್ಲಿಡುತ್ತಿದ್ದರು.</verse>
				<verse number="29">ರೆಹಬ್ಬಾಮನ ಉಳಿದ ಚರಿತ್ರೆ ಹಾಗು ಅವನ ಎಲ್ಲಾ ಕೃತ್ಯಗಳು ಯೆಹೂದ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.</verse>
				<verse number="30">ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.</verse>
				<verse number="31">ರೆಹಬ್ಬಾಮನು ಸತ್ತು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅನಂತರ ಅವನ ಮಗ ಅಬೀಯಾಮನು ಅವನ ಸ್ಥಾನದಲ್ಲಿ ಅರಸನಾದನು.</verse>
			</chapter>
			<chapter number="15">
				<verse number="1">ನೆಬಾಟನ ಮಗ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯಾಮನು</verse>
				<verse number="2">ಜುದೇಯದ ಅರಸನಾಗಿ ಜೆರುಸಲೇಮಿನಲ್ಲಿ ಮೂರು ವರ್ಷ ಆಳಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆ ಅವನ ತಾಯಿ.</verse>
				<verse number="3">ತನ್ನ ತಂದೆ ಮಾಡಿದ ಪಾಪಕೃತ್ಯಗಳನ್ನು ಇವನೂ ಮಾಡಿದನು. ಇವನ ಪೂರ್ವಜ ದಾವೀದನು ದೇವರಾದ ಸರ್ವೇಶ್ವರನಿಗೆ ಪೂರ್ಣಮನಸ್ಸಿನಿಂದ ಸೇವೆಸಲ್ಲಿಸಿದಂತೆ ಇವನು ಸೇವೆಸಲ್ಲಿಸಲಿಲ್ಲ.</verse>
				<verse number="4">ಹಿತ್ತಿಯನಾದ ಊರೀಯನ ವಿಷಯವೊಂದನ್ನು ಬಿಟ್ಟರೆ, ಬೇರೆ ಯಾವ ವಿಷಯದಲ್ಲೂ ತಮ್ಮ ಆಜ್ಞೆಯನ್ನು ಮೀರದೆ, ಜೀವದಿಂದಿರುವವರೆಗೂ ತಮ್ಮ ಚಿತ್ತಕ್ಕನುಸಾರ ನಡೆದ ದಾವೀದನ ನಿಮಿತ್ತ, ಸರ್ವೇಶ್ವರಸ್ವಾಮಿ ಜೆರುಸಲೇಮಿನಲ್ಲಿನ ಇವನ ದೀಪವನ್ನು ಆರಿಸಲಿಲ್ಲ.</verse>
				<verse number="5">ಜೆರುಸಲೇಮನ್ನೂ ಇವನ ಸಂತಾನವನ್ನೂ ಉಳಿಸಿದರು.</verse>
				<verse number="6">(ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.)</verse>
				<verse number="7">ಅಬೀಯಾಮನ ಉಳಿದ ಚರಿತ್ರೆ ಹಾಗು ಅವನ ಎಲ್ಲಾ ಕೃತ್ಯಗಳು ಯೆಹೂದರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.</verse>
				<verse number="8">ಅಬೀಯಾಮನು ಸತ್ತು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಸನು ಅರಸನಾದನು.</verse>
				<verse number="9">ಇಸ್ರಯೇಲರ ಅರಸ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಆಸನು ಜುದೇಯದ ಅರಸನಾದನು.</verse>
				<verse number="10">ಇವನು ಜೆರುಸಲೇಮಿನಲ್ಲಿ ನಾಲ್ವತ್ತೊಂದು ವರ್ಷ ಆಳಿದನು. ಅಬ್ಷಾಲೋಮನ ಮಗಳಾದ ಮಾಕಾ ಎಂಬಾಕೆ ಇವನ ತಾಯಿ.</verse>
				<verse number="11">ಇವನು ತನ್ನ ಪೂರ್ವಜ ದಾವೀದನಂತೆ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.</verse>
				<verse number="12">ವೇಶ್ಯೆಯರಾಗಿ ವರ್ತಿಸುತ್ತಿದ್ದ, ಹೆಂಗಸರು ಹಾಗು ಗಂಡಸರನ್ನೆಲ್ಲಾ ನಾಡಿನಿಂದ ಹೊರಡಿಸಿ ತನ್ನ ಹಿರಿಯರು ಮಾಡಿಸಿಟ್ಟಿದ್ದ ವಿಗ್ರಹಗಳನ್ನೆಲ್ಲಾ ತೆಗೆದು ಹಾಕಿದನು.</verse>
				<verse number="13">ಇವನ ತಾಯಿ ಮಾಕಳು ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ‘ರಾಜಮಾತೆ’ ಎಂಬ ಪದವಿಯಿಂದ ತೆಗೆದುಹಾಕಿ ಆ ಮೂರ್ತಿಯನ್ನು ಕಡಿದು ಕಿದ್ರೋನ್ ಹಳ್ಳದ ಹತ್ತಿರ ಸುಡಿಸಿದನು.</verse>
				<verse number="14">ಇವನು ನಾಡಿನಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಮನಸ್ಸಿನಿಂದ ಸರ್ವೇಶ್ವರನಿಗೆ ಪ್ರಾಮಾಣಿಕನಾಗಿ ನಡೆದುಕೊಂಡನು.</verse>
				<verse number="15">ಇದಲ್ಲದೆ, ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ್ದ ಬೆಳ್ಳಿಬಂಗಾರವನ್ನೂ ಪಾತ್ರೆಗಳನ್ನೂ ಸರ್ವೇಶ್ವರನ ಆಲಯದಲ್ಲಿ ತಂದಿಟ್ಟನು.</verse>
				<verse number="16">ಇವನಿಗೂ ಇಸ್ರಯೇಲರ ಅರಸ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.</verse>
				<verse number="17">ಇಸ್ರಯೇಲರ ಅರಸ ಬಾಷನು ಯೆಹೂದ್ಯರಿಗೆ ವಿರುದ್ಧ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ‘ರಾಮ್’ ಎಂಬ ಕೋಟೆಯನ್ನು ಕಟ್ಟಿಸಿದನು.</verse>
				<verse number="18">ಆಗ ಆಸನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅದನ್ನು ದೂತರ ಮುಖಾಂತರ ದಮಸ್ಕದಲ್ಲಿದ್ದ ಸಿರಿಯಾದವರ ಅರಸನೂ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು.</verse>
				<verse number="19">ಅಲ್ಲದೆ ಅವನಿಗೆ, “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಂದು ಒಪ್ಪಂದವಿದೆಯಲ್ಲವೆ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಯೇಲರ ಅರಸ ಬಾಷನು ನನ್ನ ನಾಡಿನಿಂದ ಸೈನ್ಯವನ್ನು ಹಿಂದಕ್ಕೆ ತೆಗೆದುಕೊಂಡು ನನ್ನನ್ನು ಬಿಟ್ಟುಹೋಗುವಂತೆ, ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು,” ಎಂದು ಹೇಳಿಸಿದನು.</verse>
				<verse number="20">ಬೆನ್ಹದದನು ಅರಸ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಅಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು.</verse>
				<verse number="21">ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆಯನ್ನು ಕಟ್ಟಿಸುವುದನ್ನು ಬಿಟ್ಟು ತಿರ್ಚಕ್ಕೆ ಹೋಗಿ ಅಲ್ಲೇ ವಾಸಿಸಿದನು.</verse>
				<verse number="22">ಅನಂತರ ಅರಸನಾದ ಆಸನು ಯೆಹೂದ್ಯರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಸಿ ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲು ಮರಗಳನ್ನು ಇವರ ಮುಖಾಂತರ ತೆಗೆದುಕೊಂಡು ಹೋಗಿ ಬೆನ್ಯಾಮೀನ್ಯರ ಗೆಬ, ಮಿಚ್ಪೆ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.</verse>
				<verse number="23">ಆಸನ ಉಳಿದ ಚರಿತ್ರೆ, ಅವನ ಪರಾಕ್ರಮಕೃತ್ಯಗಳು, ಪಟ್ಟಣಗಳನ್ನು ಕಟ್ಟಿಸಿದ ಸಂಗತಿ ಹಾಗು ಅವನ ಇತರ ಕಾರ್ಯಕಲಾಪಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. ಮುಪ್ಪಿನಲ್ಲಿ ಅವನ ಕಾಲುಗಳಿಗೆ ರೋಗ ತಗಲಿತು.</verse>
				<verse number="24">ಅವನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ಅವನ ಪೂರ್ವಜ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗ ಯೆಹೋಷಾಫಾಟನು ಅರಸನಾದನು.</verse>
				<verse number="25">ಯೆಹೂದ್ಯರ ಅರಸ ಆಸನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗ ನಾದಾಬನು ಇಸ್ರಯೇಲರ ಅರಸನಾಗಿ ಎರಡು ವರ್ಷ ಆಳಿದನು.</verse>
				<verse number="26">ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ತನ್ನ ತಂದೆಯ ಮಾರ್ಗದಲ್ಲಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.</verse>
				<verse number="27">ಇವನು ಇಸ್ರಯೇಲರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ ಅಹೀಯನ ಮಗನೂ ಆದ ಬಾಷನೆಂಬವನು ಇವನಿಗೆ ವಿರುದ್ಧ ಒಳಸಂಚು ಮಾಡಿ ಇವನನ್ನು ಕೊಂದನು.</verse>
				<verse number="28">ಬಾಷನು ಜುದೇಯದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಇವನನ್ನು ಕೊಂದು ಇವನಿಗೆ ಬದಲಾಗಿ ತಾನೇ ಅರಸನಾದನು.</verse>
				<verse number="29">ಅರಸನಾದ ಕೂಡಲೆ, ಯಾರೊಬ್ಬಾಮನ ಮನೆಯವರಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಸರ್ವೇಶ್ವರ ಶಿಲೋವಿನ ಪ್ರವಾದಿ ಅಹೀಯನ ಮುಖಾಂತರ ಹೇಳಿಸಿದ ಮಾತು ನೆರವೇರಿತು.</verse>
				<verse number="30">ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಯೇಲರನ್ನೂ ಪಾಪಕ್ಕೆ ಪ್ರೇರಿಸಿ ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ರೇಗಿಸಿದ್ದರಿಂದ ಹೀಗಾಯಿತು.</verse>
				<verse number="31">ನಾದಾಬನ ಕಾರ್ಯಕಲಾಪಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.</verse>
				<verse number="32">ಆಸನಿಗೂ ಇಸ್ರಯೇಲರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.</verse>
				<verse number="33">ಜುದೇಯದ ಅರಸ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅಹೀಯನ ಮಗ ಬಾಷನು ಇಸ್ರಯೇಲರ ಅರಸನಾಗಿ ತಿರ್ಚದಲ್ಲಿ ಇದ್ದುಕೊಂಡು ಇಪ್ಪತ್ತನಾಲ್ಕು ವರ್ಷ ಆಳಿದನು.</verse>
				<verse number="34">ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.</verse>
			</chapter>
			<chapter number="16">
				<verse number="1">ಆಗ ಸರ್ವೇಶ್ವರಸ್ವಾಮಿ ಹನಾನೀಯನ ಮಗ ಯೇಹುವಿನ ಮುಖಾಂತರ ಬಾಷನಿಗೆ ಹೀಗೆ ಹೇಳಿಸಿದರು:</verse>
				<verse number="2">“ನಾನು ನಿನ್ನನ್ನು ಧೂಳಿನಿಂದ ಎತ್ತಿ ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನನ್ನಾಗಿ ಮಾಡಿದೆ. ಆದರೂ ನೀನು ಯಾರೊಬ್ಬಾಮನ ಮಾರ್ಗದಲ್ಲೇ ನಡೆದು, ನನ್ನ ಜನರಾದ ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದೆ. ಅವರ ಪಾಪದ ಮೂಲಕ ನನಗೆ ಕೋಪವನ್ನೆಬ್ಬಿಸಿದೆ.</verse>
				<verse number="3">ಆದ್ದರಿಂದ ನಿನ್ನನ್ನೂ ನಿನ್ನ ಮನೆಯವರನ್ನೂ ಅಳಿಸಿಬಿಡುವೆನು; ನೆಬಾಟನ ಮಗ ಯಾರೊಬ್ಬಾಮನ ಮನೆಗಾದ ಗತಿ ನಿನ್ನ ಮನೆಗೂ ಆಗುವುದು.</verse>
				<verse number="4">ನಿನ್ನ ಕುಟುಂಬದವರಲ್ಲಿ ಪಟ್ಟಣದೊಳಗೆ ಸಾಯುವವರನ್ನು ನಾಯಿಗಳು ಹಾಗು ಅಡವಿಯಲ್ಲಿ ಸಾಯುವವರನ್ನು ಪಕ್ಷಿಗಳು ತಿಂದುಬಿಡುವುವು\.</verse>
				<verse number="5">ಬಾಷನ ಉಳಿದ ಚರಿತ್ರೆ ಹಾಗು ಅವನ ಪರಾಕ್ರಮ ಸಾಧನೆಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.</verse>
				<verse number="6">ಅವನು ನಿಧನನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ತಿರ್ಚದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಏಲನು ಅರಸನಾದನು.</verse>
				<verse number="7">ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಸರ್ವೇಶ್ವರನನ್ನು ರೇಗಿಸಿ ಅವರ ದೃಷ್ಟಿಯಲ್ಲಿ ದ್ರೋಹಿಯಾದನು. ಆದ್ದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಸರ್ವೇಶ್ವರನು ಹನಾನೀಯ ಮಗ ಯೇಹುವಿನ ಮುಖಾಂತರ ಅವನಿಗೂ ಅವನ ಕುಟುಂಬಕ್ಕೂ ಸಂಭವಿಸಲಿರುವ ದುರ್ಗತಿಯನ್ನು ಮುಂತಿಳಿಸಿದ್ದರು.</verse>
				<verse number="8">ಯೆಹೂದ್ಯರ ಅರಸ ಆಸನ ಆಳ್ವಿಕೆಯ ಇಪ್ಪತ್ತಾರನೆಯ ವರ್ಷದಲ್ಲಿ ಬಾಷನ ಮಗ ಏಲನು ತಿರ್ಚದಲ್ಲಿ ಇಸ್ರಯೇಲರ ಅರಸನಾಗಿ ಎರಡು ವರ್ಷ ಆಳಿದನು.</verse>
				<verse number="9">ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬವನು ಅವನಿಗೆ ವಿರುದ್ಧ ಒಳಸಂಚು ಮಾಡಿದನು. ಒಮ್ಮೆ ಅರಸನು ತಿರ್ಚದಲ್ಲಿ ತನ್ನ ಮನೆಯ ಉಗ್ರಾಣಿಕನಾದ ಅರ್ಚನೆಂಬವನ ಮನೆಯಲ್ಲಿ ಕುಡಿದು ಮತ್ತನಾಗಿದ್ದನು.</verse>
				<verse number="10">ಆಗ ಜಿಮ್ರಿ ಅಲ್ಲಿಗೆ ಹೋಗಿ ಅವನನ್ನು ಕೆಡವಿ ಕೊಂದುಹಾಕಿದನು. ಅವನಿಗೆ ಬದಲಾಗಿ ತಾನೇ ಅರಸನಾದನು. ಇದು ಜುದೇಯದ ಅರಸ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ನಡೆಯಿತು.</verse>
				<verse number="11">ಇವನು ಸಿಂಹಾಸನದಲ್ಲಿ ಕುಳಿತು ಆಳತೊಡಗಿದ ಕೂಡಲೆ ಬಾಷನ ಮನೆಯವರನ್ನೂ ಅವನ ಬಂಧುಮಿತ್ರರನ್ನೂ ಉಳಿಸಲಿಲ್ಲ.</verse>
				<verse number="12">ಬಾಷನೂ ಅವನ ಮಗ ಏಲನೂ ತಾವು ಪಾಪಮಾಡಿದ್ದಲ್ಲದೆ ಇಸ್ರಯೇಲರನ್ನೂ ಪಾಪಕ್ಕೆ ಪ್ರಚೋದಿಸಿದರು. ತಮ್ಮ ವಿಗ್ರಹಗಳಿಂದ ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ರೇಗಿಸಿದರು.</verse>
				<verse number="13">ಈ ಕಾರಣ ಪ್ರವಾದಿ ಯೇಹುವಿನ ಮುಖಾಂತರ ಸರ್ವೇಶ್ವರ ಬಾಷನ ಮನೆಗೆ ದುರ್ಗತಿಯನ್ನು ಮುಂತಿಳಿಸಿದ್ದರು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು.</verse>
				<verse number="14">ಏಲನ ಉಳಿದ ಚರಿತ್ರೆ ಹಾಗು ಅವನ ಕಾರ್ಯಕಲಾಪಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.</verse>
				<verse number="15">ಯೆಹೂದ್ಯರ ಅರಸ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿ ಎಂಬವನು ತಿರ್ಚದಲ್ಲಿ ಇಸ್ರಯೇಲರ ಅರಸನಾಗಿ ಏಳು ದಿವಸ ಆಳಿದನು. ಆ ಸಮಯದಲ್ಲಿ ಇಸ್ರಯೇಲರು ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದರು.</verse>
				<verse number="16">ಜಿಮ್ರಿ, ಅರಸನಿಗೆ ವಿರುದ್ಧ ಒಳಸಂಚುಮಾಡಿ ಅವನನ್ನು ಕೊಂದುಹಾಕಿದನೆಂಬ ಸುದ್ದಿ ಪಾಳೆಯದಲ್ಲಿದ್ದ ಇಸ್ರಯೇಲರಿಗೆ ಮುಟ್ಟಿತು. ಅವರು ಅದೇ ದಿವಸ, ಅಲ್ಲಿಯೇ, ಸೈನ್ಯಾಧಿಪತಿಯಾದ ಒಮ್ರಿಯನ್ನು ತಮ್ಮ ಅರಸನನ್ನಾಗಿ ನೇಮಿಸಿಕೊಂಡರು.</verse>
				<verse number="17">ಇವನೂ ಇವನ ಜೊತೆಯಲ್ಲಿದ್ದ ಇಸ್ರಯೇಲರೆಲ್ಲರೂ ಗಿಬ್ಬೆತೋನನ್ನು ಬಿಟ್ಟುಹೋಗಿ ತಿರ್ಚಕ್ಕೆ ಮುತ್ತಿಗೆ ಹಾಕಿದರು.</verse>
				<verse number="18">ಪಟ್ಟಣ ಅವರ ವಶವಾದದ್ದನ್ನು ಜಿಮ್ರಿ ಕಂಡು, ಅರಮನೆಯ ಗರ್ಭಗೃಹವನ್ನು ಹೊಕ್ಕು ಅರಮನೆಗೆ ಬೆಂಕಿಹೊತ್ತಿಸಿ ಸುಟ್ಟುಕೊಂಡು ಸತ್ತನು.</verse>
				<verse number="19">ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಯೇಲರ ಪಾಪಕ್ಕೆ ಕಾರಣವಾಗಿದ್ದನು. ಹೀಗೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದುದರಿಂದ ಈ ದುರ್ಗತಿ ಸಂಭವಿಸಿತು.</verse>
				<verse number="20">ಜಿಮ್ರಿಯ ಉಳಿದ ಚರಿತ್ರೆ ಹಾಗು ಅವನ ಒಳಸಂಚು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.</verse>
				<verse number="21">ಆ ಕಾಲದಲ್ಲಿ ಇಸ್ರಯೇಲರಲ್ಲಿ ಎರಡು ಪಂಗಡಗಳಿದ್ದವು; ಒಂದು ಪಂಗಡದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು; ಇನ್ನೊಂದು ಪಂಗಡದವರು ಒಮ್ರಿಯನ್ನು ಹಿಂಬಾಲಿಸಿದರು.</verse>
				<verse number="22">ಆದರೆ ಒಮ್ರಿಯ ಪಂಗಡದವರು ಗೀನತನ ಮಗ ತಿಬ್ನಿಯ ಪಂಗಡದವರನ್ನು ಸೋಲಿಸಿದರು. ತಿಬ್ನಿಯು ಸತ್ತುಹೋದನು; ಒಮ್ರಿಯೇ ಆಳತೊಡಗಿದನು.</verse>
				<verse number="23">ಯೆಹೂದ್ಯರ ಅರಸ ಆಸನ ಆಳ್ವಿಕೆಯ ಮೂವತ್ತೊಂದನೆಯ ವರ್ಷದಲ್ಲಿ ಒಮ್ರಿ ಇಸ್ರಯೇಲರ ಅರಸನಾಗಿ ಹನ್ನೆರಡು ವರ್ಷ ಆಳಿದನು. ಆರು ವರ್ಷಗಳವರೆಗೆ ತಿರ್ಚವೇ ಅವನ ರಾಜಧಾನಿಯಾಗಿತ್ತು.</verse>
				<verse number="24">ಅನಂತರ ಶೆಮೆರ್ ಎಂಬವನಿಗೆ ಆರು ಸಾವಿರ ಬೆಳ್ಳಿನಾಣ್ಯಗಳನ್ನು ಕೊಟ್ಟು ಅವನಿಂದ ಸಮಾರಿಯ ಎಂಬ ಗುಡ್ಡವನ್ನು ಕೊಂಡುಕೊಂಡನು. ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮೆರಿನ ಜ್ಞಾಪಕಾರ್ಥವಾಗಿ ಸಮಾರಿಯ ಎಂಬ ಹೆಸರಿಟ್ಟನು.</verse>
				<verse number="25">ಇವನು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿ ಹಾಗು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನು ಆಗಿದ್ದನು.</verse>
				<verse number="26">ಇಸ್ರಯೇಲರು ವಿಗ್ರಹಗಳಿಂದ ತಮ್ಮ ದೇವರಾದ ಸರ್ವೇಶ್ವರನನ್ನು ರೇಗಿಸಿದಂತೆ ಅವರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗದಲ್ಲೇ ಇವನೂ ನಡೆದನು.</verse>
				<verse number="27">ಇವನ ಉಳಿದ ಚರಿತ್ರೆ, ಪರಾಕ್ರಮ ಹಾಗು ಕಾರ್ಯಕಲಾಪಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.</verse>
				<verse number="28">ಒಮ್ರಿ ಸತ್ತು ಪಿತೃಗಳ ಬಳಿಗೆ ಸೇರಿದಾಗ ಇವನ ಶವವನ್ನು ಸಮಾರಿಯ ಪಟ್ಟಣದಲ್ಲಿ ಸಮಾಧಿಮಾಡಿದರು. ಇವನ ಸ್ಥಾನದಲ್ಲಿ ಇವನ ಮಗ ಅಹಾಬನು ಅರಸನಾದನು.</verse>
				<verse number="29">ಯೆಹೂದ್ಯರ ಅರಸ ಆಸನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಒಮ್ರಿಯ ಮಗ ಅಹಾಬನು ಇಸ್ರಯೇಲರ ಅರಸನಾದನು; ಸಮಾರಿಯ ಪಟ್ಟಣದಲ್ಲಿ ಇಪ್ಪತ್ತೆರಡು ವರ್ಷ ಆಳಿದನು.</verse>
				<verse number="30">ಇವನು ತನ್ನ ಹಿಂದಿನ ಅಧಿಕಾರಿಗಳೆಲ್ಲರಿಗಿಂತಲೂ ದುಷ್ಟನು. ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿ.</verse>
				<verse number="31">ಇವನು ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗದಲ್ಲಿ ನಡೆದದ್ದು ಸಾಲದೆಂದು, ಸಿದೋನ್ಯರ ಅರಸ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆ ಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.</verse>
				<verse number="32">ಬಾಳ್ ದೇವರಿಗಾಗಿ ಸಮಾರಿಯದಲ್ಲಿ ಒಂದು ಗುಡಿ ಕಟ್ಟಿಸಿ, ಅದರಲ್ಲಿ ಬಲಿಪೀಠವನ್ನು ಕಟ್ಟಿಸಿದನು;</verse>
				<verse number="33">ಇದಲ್ಲದೆ, ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿದನು; ಹೀಗೆ ಇನ್ನು ಎಷ್ಟೋ ಅಧರ್ಮ ಕೆಲಸಗಳನ್ನು ಮಾಡಿ, ಮುಂದೆಯಿದ್ದ ಎಲ್ಲ ಇಸ್ರಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ರೇಗಿಸಿದನು.</verse>
				<verse number="34">ಇವನ ಕಾಲದಲ್ಲೆ ಬೇತೇಲಿನವನಾದ ಹೀಯೇಲನು ಜೆರಿಕೋಪಟ್ಟಣವನ್ನು ಕಟ್ಟಿಸಿದನು. ಅವನು ಅದಕ್ಕೆ ಅಸ್ತಿವಾರ ಹಾಕುವಾಗ ಹಿರಿಯ ಮಗನಾದ ಅಬೀರಾಮನನ್ನು ಹಾಗು ಅದಕ್ಕೆ ಬಾಗಿಲುಗಳನ್ನಿಡುವಾಗ ಕಿರಿಯ ಮಗನಾದ ಸೆಗೂಬನನ್ನೂ ಕಳೆದುಕೊಂಡನು. ಹೀಗೆ ಸರ್ವೇಶ್ವರ ನೂನನ ಮಗ ಯೆಹೋಶುವನಿಂದ ಹೇಳಿಸಿದ ಮಾತು ನೆರವೇರಿತು.</verse>
			</chapter>
			<chapter number="17">
				<verse number="1">ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.</verse>
				<verse number="2">ಸರ್ವೇಶ್ವರಸ್ವಾಮಿ ಎಲೀಯನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗು; ಜೋರ್ಡನ್ ನದಿಯ ಆಚೆಯಿರುವ ಕೆರೀತ್ ಹಳ್ಳದಲ್ಲಿ ಅಡಗಿಕೋ.</verse>
				<verse number="3"></verse>
				<verse number="4">ಆ ಹಳ್ಳದ ನೀರು ನಿನಗೆ ಪಾನವಾಗಿರುವುದು; ನಿನಗೆ ಆಹಾರ ತಂದುಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ,” ಎಂದು ಹೇಳಿದರು.</verse>
				<verse number="5">ಸರ್ವೇಶ್ವರನ ಅಪ್ಪಣೆಯಂತೆ ಜೋರ್ಡನಿನ ಪೂರ್ವಕ್ಕಿರುವ ಕೆರೀತ್ ಹಳ್ಳದಲ್ಲಿ ಅವನು ವಾಸಿಸಿದನು.</verse>
				<verse number="6">ಕಾಗೆಗಳು ಅವನಿಗೆ ಬೆಳಿಗ್ಗೆ ಹಾಗು ಸಂಜೆ ರೊಟ್ಟಿ, ಮಾಂಸ, ಇವುಗಳನ್ನು ತಿನ್ನಲು ತಂದುಕೊಡುತ್ತಿದ್ದವು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.</verse>
				<verse number="7">ಕೆಲವು ದಿವಸಗಳಾದ ನಂತರ ನಾಡಿನಲ್ಲಿ ಮಳೆಯಿಲ್ಲದ್ದರಿಂದ ಹಳ್ಳವು ಬತ್ತಿಹೋಯಿತು.</verse>
				<verse number="8">ಆಗ ಸರ್ವೇಶ್ವರ ಅವನಿಗೆ: “ನೀನು ಇಲ್ಲಿಂದ ಸಿದೋನ್ಯರ ಸರೆಪ್ತಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಿಸು. ನಿನ್ನನ್ನು ಪೋಷಿಸಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ,” ಎಂದರು.</verse>
				<verse number="9"></verse>
				<verse number="10">ಅವನು ಅಲ್ಲಿಂದ ಹೊರಟು ಸರೆಪ್ತಾದ ಊರು ಬಾಗಿಲಿನ ಸಮೀಪಕ್ಕೆ ಬಂದನು. ಸೌದೆ ಕೂಡಿಸುತ್ತಿದ್ದ ಒಬ್ಬ ವಿಧವೆಯನ್ನು ಕಂಡು ಆಕೆಯನ್ನು ಕರೆದು, “ದಯವಿಟ್ಟು ಕುಡಿಯುವುದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ,” ಎಂದು ಹೇಳಿದನು.</verse>
				<verse number="11">ಆಕೆ ಹೋಗುತ್ತಿರುವಾಗ ಮತ್ತೆ ಆಕೆಯನ್ನು ಕರೆದು, “ನೀನು ಬರುವಾಗ ನನಗೆ ಒಂದು ತುಂಡು ರೊಟ್ಟಿಯನ್ನು ಸಹ ತೆಗೆದುಕೊಂಡು ಬಾ,” ಎಂದನು.</verse>
				<verse number="12">ಆಕೆ, “ನಿನ್ನ ದೇವರಾದ ಸರ್ವೇಶ್ವರನಾಣೆ, ನನ್ನ ಹತ್ತಿರ ರೊಟ್ಟಿಯಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಕುಡಿಕೆಯಲ್ಲಿ ಸ್ವಲ್ಪ ಎಣ್ಣೆ, ಇವುಗಳ ಹೊರತು ಬೇರೇನೂ ಇಲ್ಲ. ಈಗ ಸೌದೆ ಆಯ್ದುಕೊಂಡು ಹೋಗಿ ನನಗೂ ನನ್ನ ಮಗನಿಗೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ,” ಎಂದು ಉತ್ತರ ಕೊಟ್ಟಳು.</verse>
				<verse number="13">ಆಗ ಎಲೀಯನು, “ಹೆದರಬೇಡ, ನೀನು ಹೇಳಿದಂತೆ ಮಾಡು; ಆದರೆ ಮೊದಲು ಅದರಿಂದ ನನಗೆ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ; ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.</verse>
				<verse number="14">ಇಸ್ರಯೇಲ್ ದೇವರಾದ ಸರ್ವೇಶ್ವರ ನಿನಗೆ, “ನಾನು ನಾಡಿಗೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಕೆಯಲ್ಲಿರುವ ಹಿಟ್ಟು ತೀರುವುದಿಲ್ಲ, ಕುಡಿಕೆಯಲ್ಲಿರುವ ಎಣ್ಣೆ ಮುಗಿದುಹೋಗುವುದಿಲ್ಲ,” ಎಂದು ಹೇಳುತ್ತಾರೆ ಎಂದನು.</verse>
				<verse number="15">ಆಕೆ ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ ಆಕೆಯ ಮನೆಯವರೂ ಎಲೀಯನೂ ಅದನ್ನು ಅನೇಕ ದಿವಸಗಳವರೆಗೆ ಊಟಮಾಡಿದರು.</verse>
				<verse number="16">ಸರ್ವೇಶ್ವರ ಎಲೀಯನ ಮುಖಾಂತರ ಹೇಳಿದಂತೆ ಮಡಕೆಯಲ್ಲಿದ್ದ ಹಿಟ್ಟು ತೀರಲಿಲ್ಲ; ಕುಡಿಕೆಯಲ್ಲಿದ್ದ ಎಣ್ಣೆ ಮುಗಿದು ಹೋಗಲಿಲ್ಲ.</verse>
				<verse number="17">ಕೆಲವು ದಿನಗಳಾದ ನಂತರ ಆ ಮನೆಯಜಮಾನಿಯ ಮಗನು ಅಸ್ಪಸ್ಥನಾದನು; ಅವನ ರೋಗ ಹೆಚ್ಚುತ್ತಾ ಕೊನೆಗೆ ಉಸಿರಾಡುವುದು ನಿಂತುಹೋಯಿತು.</verse>
				<verse number="18">ಆಗ ಆಕೆ ಎಲೀಯನಿಗೆ, “ದೈವಪುರುಷನೇ, ನನ್ನ ವಿರುದ್ಧ ನಿನಗೇನಿದೆ? ನೀನು ನನ್ನ ಪಾಪವನ್ನು ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿಯೋ?” ಎಂದಳು.</verse>
				<verse number="19">ಆದರೆ ಎಲೀಯನು, “ನಿನ್ನ ಮಗನನ್ನು ನನಗೆ ಕೊಡು,” ಎಂದು ಹೇಳಿ ಅವನನ್ನು ಆಕೆಯ ಮಡಿಲಿನಿಂದ ತೆಗೆದುಕೊಂಡು, ತಾನು ವಾಸವಾಗಿದ್ದ ಮೇಲಿನ ಕೋಣೆಗೆ ಹೋಗಿ, ತನ್ನ ಮಂಚದ ಮೇಲೆ ಮಲಗಿಸಿದನು.</verse>
				<verse number="20">ಅನಂತರ ಅವನು, “ನನ್ನ ದೇವರಾದ ಸರ್ವೇಶ್ವರಾ, ನನಗೆ ಆಶ್ರಯವಿತ್ತ ಈ ವಿಧವೆಯ ಮಗನನ್ನು ನೀವು ಸಾಯಿಸಿ ಆಕೆಗೂ ಕೇಡನ್ನುಂಟುಮಾಡಿದ್ದೇಕೆ?” ಎಂದು ಹೇಳಿ,</verse>
				<verse number="21">ಹುಡುಗನ ಮೇಲೆ ಮೂರುಸಾರಿ ಬೋರಲು ಬಿದ್ದು, “ನನ್ನ ದೇವರಾದ ಸರ್ವೇಶ್ವರಾ, ಈ ಹುಡುಗನ ಪ್ರಾಣ ತಿರುಗಿ ಬರುವಂತೆ ಮಾಡಿ,” ಎಂದು ಮೊರೆಯಿಟ್ಟನು.</verse>
				<verse number="22">ಸರ್ವೇಶ್ವರ ಅವನ ಪ್ರಾರ್ಥನೆಯನ್ನು ಕೇಳಿದರು. ಹುಡುಗನ ಪ್ರಾಣ ತಿರುಗಿಬಂದು ಅವನು ಉಜ್ಜೀವಿಸಿದನು.</verse>
				<verse number="23">ಎಲೀಯನು ಆ ಹುಡುಗನನ್ನು ಅಲ್ಲಿಂದ ಕೆಳಗೆ ತೆಗೆದುಕೊಂಡುಹೋಗಿ ಅವನ ತಾಯಿಗೆ ಒಪ್ಪಿಸಿ, “ಇಗೋ, ನೋಡು; ನಿನ್ನ ಮಗ ಜೀವಂತನಾಗಿದ್ದಾನೆ,” ಎಂದನು.</verse>
				<verse number="24">ಆಗ ಆಕೆ, “ನೀವು ದೈವಪುರುಷರೆಂದೂ ನಿಮ್ಮ ಬಾಯಿಂದ ಬಂದ ಸರ್ವೇಶ್ವರನ ಮಾತು ಸತ್ಯವೆಂದೂ ಈಗ ನನಗೆ ಗೊತ್ತಾಯಿತು,” ಎಂದು ಹೇಳಿದಳು.</verse>
			</chapter>
			<chapter number="18">
				<verse number="1">ಅನೇಕ ದಿವಸಗಳಾದನಂತರ ಎಲೀಯನಿಗೆ ಸರ್ವೇಶ್ವರನ ವಾಣಿ ಉಂಟಾಯಿತು. ಬರಗಾಲದ ಮೂರನೆಯವರ್ಷದಲ್ಲಿ ಸರ್ವೇಶ್ವರ ಅವನಿಗೆ, “ನೀನು ಹೋಗಿ ಅಹಾಬನನ್ನು ಕಾಣು; ನಾನು ನಾಡಿಗೆ ಮಳೆಕೊಡುತ್ತೇನೆ,” ಎಂದರು.</verse>
				<verse number="2">ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾರಿಯದಲ್ಲಿ ಕ್ಷಾಮ ಬಹಳ ಭೀಕರವಾಗಿತ್ತು.</verse>
				<verse number="3">ಆದುದರಿಂದ ಅಹಾಬನು ತನ್ನ ಉಗ್ರಾಣಿಕನಾದ ಓಬದ್ಯ ಎಂಬವನನ್ನು ಕರೆಯಿಸಿದನು.</verse>
				<verse number="4">(ಈಜೆಬೆಲಳು ಸರ್ವೇಶ್ವರನ ಪ್ರವಾದಿಗಳನ್ನು ಸಂಹರಿಸುತ್ತಿದ್ದಾಗ ಈ ಓಬದ್ಯನು ಸರ್ವೇಶ್ವರನಲ್ಲಿ ಬಹು ಭಯಭಕ್ತಿಯುಳ್ಳವನಾಗಿ ನೂರು ಮಂದಿ ಪ್ರವಾದಿಗಳನ್ನು ಕರೆದುಕೊಂಡುಹೋಗಿ ಅವರನ್ನು ಐವತ್ತೈವತ್ತು ಮಂದಿಯನ್ನಾಗಿ, ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.)</verse>
				<verse number="5">ಅಹಾಬನು ಅವನಿಗೆ, “ನಾವು ದೇಶಸಂಚಾರಮಾಡುತ್ತಾ ಎಲ್ಲಾ ಹಳ್ಳ ಬುಗ್ಗೆಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ; ಸಿಕ್ಕುವುದಾದರೆ ನಮ್ಮ ಕುದುರೆಗಳೂ ಹೇಸರಕತ್ತೆಗಳೂ ಉಳಿಯುವುವು; ಆಗ ಅವುಗಳನ್ನು ಕೊಲ್ಲುವ ಅವಶ್ಯಕತೆ ಇರುವುದಿಲ್ಲ,” ಎಂದು ಹೇಳಿ ಸಂಚಾರಕ್ಕಾಗಿ ನಾಡನ್ನು ಎರಡು ಭಾಗಮಾಡಿ, ಒಂದು ಭಾಗಕ್ಕೆ ಓಬದ್ಯನನ್ನು ಕಳುಹಿಸಿ, ಇನ್ನೊಂದು ಭಾಗಕ್ಕೆ ತಾನೇ ಹೊರಟುಹೋದನು.</verse>
				<verse number="6"></verse>
				<verse number="7">ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ತಟ್ಟನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು ಸಾಷ್ಟಾಂಗ ನಮಸ್ಕಾರ ಮಾಡಿದನು. “ತಾವು ನನ್ನ ಸ್ವಾಮಿ ಎಲೀಯರೋ?’ ಎಂದು ಕೇಳಿದನು.</verse>
				<verse number="8">ಎಲೀಯನು, “ಹೌದು; ನೀನು ಹೋಗಿ ನಿನ್ನ ಒಡೆಯನಿಗೆ, ‘ಎಲೀಯನು ಬಂದಿದ್ದಾನೆಂದು’ ಹೇಳು,” ಎಂದನು.</verse>
				<verse number="9">ಅದಕ್ಕೆ ಓಬದ್ಯನು, “ಅಹಾಬನು ನನ್ನನ್ನು ಕೊಲ್ಲುವ ಹಾಗೆ ತಾವು ನನ್ನನ್ನು ಅವನ ಕೈಗೆ ಒಪ್ಪಿಸುವುದೇಕೆ? ನಾನೇನು ಪಾಪಮಾಡಿದೆ?</verse>
				<verse number="10">ತಮ್ಮ ದೇವರಾದ ಸರ್ವೇಶ್ವರನಾಣೆ, ನನ್ನ ಒಡೆಯ ಸೇವಕರನ್ನು ಅಟ್ಟಿ ನಿಮ್ಮನ್ನು ಹುಡುಕದ ಜನಾಂಗವಾಗಲಿ, ರಾಜ್ಯವಾಗಲಿ ಒಂದೂ ಇಲ್ಲ. ಆ ಜನಾಂಗ, ರಾಜ್ಯಗಳವರು, ‘ಎಲೀಯನು ನಮ್ಮಲ್ಲಿರುವುದಿಲ್ಲ,’ ಎಂದು ಹೇಳಿದಾಗ ಅವನು ಅವರಿಂದ ಪ್ರಮಾಣ ಮಾಡಿಸಿದನು.</verse>
				<verse number="11">ಹೀಗಿದ್ದರೂ ತಾವು ನನಗೆ, “ಎಲೀಯನು ಬಂದಿದ್ದಾನೆಂದು ನಿನ್ನ ಒಡೆಯನಿಗೆ ತಿಳಿಸು,” ಎಂಬುದಾಗಿ ಆಜ್ಞಾಪಿಸಬಹುದೆ?</verse>
				<verse number="12">ನಾನು ತಮ್ಮನ್ನು ಬಿಟ್ಟು ಹೊರಟ ಕೂಡಲೆ, ಸರ್ವೇಶ್ವರನ ಆತ್ಮ ತಮ್ಮನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ತಾವು ಅವನಿಗೆ ಸಿಕ್ಕದೆಹೋದರೆ ಅವನು ನನ್ನನ್ನು ಕೊಂದುಹಾಕುವನು. ನಾನು ಚಿಕ್ಕಂದಿನಿಂದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಲ್ಲವೇ?</verse>
				<verse number="13">ಈಜೆಬೆಲಳು ಸರ್ವೇಶ್ವರನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ತಮಗೆ ತಿಳಿಸಲಾಗಿದೆ ಅಲ್ಲವೆ? ಅವರಲ್ಲಿ ನೂರು ಮಂದಿಯನ್ನು ತೆಗೆದುಕೊಂಡು ಹೋಗಿ ಐವತ್ತೈವತ್ತು ಮಂದಿಯನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ?</verse>
				<verse number="14">ಹೀಗಿದ್ದರೂ ತಾವು ನನಗೆ, ‘ಎಲೀಯನು ಬಂದಿದ್ದಾನೆಂಬುದಾಗಿ’ ನಿನ್ನ ಒಡೆಯನಿಗೆ ತಿಳಿಸು,” ಎಂದು ಆಜ್ಞಾಪಿಸುತ್ತೀರಿ; ಅವನು ನನ್ನನ್ನು ಕೊಂದೇ ಕೊಲ್ಲುವನಲ್ಲವೇ?’ ಎಂದು ಉತ್ತರಕೊಟ್ಟನು.</verse>
				<verse number="15">ಆಗ ಎಲೀಯನು, “ನಾನು ಸನ್ನಿಧಿಸೇವೆಮಾಡುತ್ತಿರುವ ಸರ್ವಶಕ್ತನಾಣೆ, ಈ ದಿನ ನಾನು ಅಹಾಬನಿಗೆ ಹೇಗೂ ಕಾಣಿಸಿಕೊಳ್ಳಲೇಬೇಕು,” ಎಂದನು.</verse>
				<verse number="16">ಓಬದ್ಯನು ಅಹಾಬನ ಬಳಿಗೆ ಹೋಗಿ ಅವನಿಗೆ ಈ ಮಾತನ್ನು ತಿಳಿಸಿದನು. ಅಹಾಬನು ಎಲೀಯನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಬಂದು,</verse>
				<verse number="17">ಅವನನ್ನು ಕಂಡಕೂಡಲೆ, “ಇಸ್ರಯೇಲರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿರುವೆಯಾ?’ ಎಂದನು.</verse>
				<verse number="18">ಅದಕ್ಕೆ ಎಲೀಯನು, “ಅವರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ; ಸರ್ವೇಶ್ವರನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ನಿನ್ನ ಮನೆಯವರೂ ಅದಕ್ಕೆ ಕಾರಣರು.</verse>
				<verse number="19">ನೀನು ಈಗ ಎಲ್ಲ ಇಸ್ರಯೇಲರನ್ನು, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತುಮಂದಿ ಪ್ರವಾದಿಗಳನ್ನು ಹಾಗೂ ಅಶೇರದೇವತೆಯ ನಾನೂರೈವತ್ತುಮಂದಿ ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು,” ಎಂದು ಹೇಳಿದನು.</verse>
				<verse number="20">ಅಹಾಬನು ಇಸ್ರಯೇಲರನ್ನೂ ಎಲ್ಲಾ ಪ್ರವಾದಿಗಳನ್ನೂ ಅಲ್ಲಿಗೆ ಕರೆಯಿಸಿದನು.</verse>
				<verse number="21">ಎಲೀಯನು ಜನರೆಲ್ಲರ ಬಳಿಗೆ ಹೋಗಿ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ? ಸರ್ವೇಶ್ವರಸ್ವಾಮಿ ನಿಮಗೆ ದೇವರಾಗಿದ್ದರೆ ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ,” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡು, ಅವನು ಮತ್ತೆ ಅವರಿಗೆ,</verse>
				<verse number="22">“ಸರ್ವೇಶ್ವರನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ; ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತುಮಂದಿ ಇದ್ದಾರೆ.</verse>
				<verse number="23">ಅವರು ಎರಡು ಹೋರಿಗಳನ್ನು ನಮ್ಮ ಬಳಿಗೆ ತರಲಿ; ಅವುಗಳಲ್ಲೊಂದನ್ನು ಆರಿಸಿಕೊಂಡು, ಕಡಿದು ತುಂಡುಮಾಡಿ ಕಟ್ಟಿಗೆಯ ಮೇಲಿಡಲಿ; ಆದರೆ ಬೆಂಕಿ ಹೊತ್ತಿಸಬಾರದು. ನಾನೂ ಇನ್ನೊಂದು ಹೋರಿಯನ್ನು ಹಾಗೆಯೇ ಕಡಿದು ಬೆಂಕಿ ಹೊತ್ತಿಸದೆ ಕಟ್ಟಿಗೆಯ ಮೇಲಿಡುವೆನು.</verse>
				<verse number="24">ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಅನಂತರ ನಾನು ಸರ್ವೇಶ್ವರನ ಹೆಸರು ಹೇಳಿ ಪ್ರಾರ್ಥಿಸುವೆನು. ಅವರಿಬ್ಬರಲ್ಲಿ ಯಾರು ಆಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದು ನಿಶ್ಚಯಿಸೋಣ,” ಎಂದನು. ಜನರೆಲ್ಲರು, “ಸರಿ, ನೀನು ಹೇಳಿದಂತೆಯೇ ಆಗಲಿ,” ಎಂದು ಉತ್ತರಕೊಟ್ಟರು.</verse>
				<verse number="25">ಆಗ ಎಲೀಯನು ಬಾಳನ ಪ್ರವಾದಿಗಳಿಗೆ, “ನೀವು ಹೆಚ್ಚುಮಂದಿ ಇರುವುದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು, ಅದನ್ನು ಸಿದ್ಧಪಡಿಸಿ, ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಆದರೆ ಬೆಂಕಿಯನ್ನು ಹೊತ್ತಿಸಕೂಡದು,” ಎಂದನು.</verse>
				<verse number="26">ಅಂತೆಯೇ ತರಲಾದ ಹೋರಿಗಳಲ್ಲಿ ಒಂದನ್ನು ಅವರು ತೆಗೆದುಕೊಂಡು ಸಿದ್ಧಪಡಿಸಿದರು. ತಮ್ಮ ದೇವರಾದ ಬಾಳನ ಹೆಸರು ಹೇಳಿ, “ಬಾಳನೇ, ನಮಗೆ ಕಿವಿಗೊಡು,” ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರು. ಆದರೆ ಯಾವ ವಾಣಿಯೂ ಕೇಳಿಸಲಿಲ್ಲ; ಅವರು ಪೀಠದ ಸುತ್ತಲೂ ಕುಣಿದಾಡಿದರು. ಆದರೂ ಯಾರೂ ಉತ್ತರಕೊಡಲಿಲ್ಲ.</verse>
				<verse number="27">ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿದನು: “ಗಟ್ಟಿಯಾಗಿ ಕೂಗಿರಿ; ಅವನು ದೇವರಲ್ಲವೆ? ಈಗ ಒಂದು ವೇಳೆ ಅವನು ಧ್ಯಾನದಲ್ಲಿ ಇರಬಹುದು; ಇಲ್ಲವೇ, ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು; ಇಲ್ಲದಿದ್ದರೆ, ನಿದ್ರೆಮಾಡುತ್ತಿರಬೇಕು; ಎಚ್ಚರವಾಗಲಿ,” ಎಂದು ಹೇಳಿದನು.</verse>
				<verse number="28">ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ಧತಿಯ ಪ್ರಕಾರ ಈಟಿಕತ್ತಿಗಳಿಂದ ರಕ್ತಸೋರುವಷ್ಟು ಗಾಯಮಾಡಿಕೊಂಡರು.</verse>
				<verse number="29">ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಿದ್ದರು. ಆದರೂ ಯಾವ ವಾಣಿಯೂ ಕೇಳಿಸಲಿಲ್ಲ; ಯಾವನೂ ಅವರಿಗೆ ಉತ್ತರಕೊಡಲಿಲ್ಲ; ಅವರನ್ನು ಯಾವನೂ ಲಕ್ಷಿಸಲೂ ಇಲ್ಲ.</verse>
				<verse number="30">ಅನಂತರ ಎಲೀಯನು ಜನರೆಲ್ಲರನ್ನು ಹತ್ತಿರಕ್ಕೆ ಕರೆದನು; ಅವರು ಬಂದರು. ಹಾಳಾಗಿದ್ದ ಅಲ್ಲಿನ ಸರ್ವೇಶ್ವರನ ಪೀಠವನ್ನು ದುರಸ್ತು ಮಾಡಿಸಿದನು.</verse>
				<verse number="31">ಸರ್ವೇಶ್ವರನಿಂದ ‘ಇಸ್ರಯೇಲ್’ ಎಂಬ ಹೆಸರು ಹೊಂದಿದ ಯಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,</verse>
				<verse number="32">ಸರ್ವೇಶ್ವರನ ಹೆಸರಿಗಾಗಿ ಒಂದು ಪೀಠವನ್ನು ಕಟ್ಟಿಸಿದನು. ಅದರ ಸುತ್ತಲೂ ಇಪ್ಪತ್ತು ಸೇರು ಬೀಜವರೀ ನೆಲವನ್ನು ಅಗಿಸಿ ಕಾಲುವೆ ಮಾಡಿಸಿದನು.</verse>
				<verse number="33">ಕಟ್ಟಿಗೆಯನ್ನು ಪೀಠದ ಮೇಲೆ ಪೇರಿಸಿ, ಹೋರಿಯನ್ನು ವಧಿಸಿ ತುಂಡುಮಾಡಿ, ಅದರ ಮೇಲೆ ಇಟ್ಟನು. ಅನಂತರ ಜನರಿಗೆ, “ನಾಲ್ಕು ಕೊಡ ನೀರು ತಂದು ಬಲಿಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಹೊಯ್ಯಿರಿ,” ಎಂದು ಆಜ್ಞಾಪಿಸಿದನು.</verse>
				<verse number="34">ಅವರು ಅಂತೆಯೇ ತೆಗೆದುಕೊಂಡು ಬಂದರು. “ಇನ್ನೊಂದು ಸಾರಿ ತನ್ನಿ,” ಎಂದು ಹೇಳಿದನು. ಅವರು ಇನ್ನೊಮ್ಮೆ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರ ಆಜ್ಞಾಪಿಸಲು ಅವರು ಮತ್ತೊಮ್ಮೆ ತಂದು ಸುರಿದರು.</verse>
				<verse number="35">ನೀರು ವೇದಿಯ ಸುತ್ತಲೂ ಹರಿಯಿತು. ಇದಲ್ಲದೆ, ಅವನು ಕಾಲುವೆಯನ್ನೂ ನೀರಿನಿಂದ ತುಂಬಿಸಿದನು.</verse>
				<verse number="36">ಸಂಧ್ಯಾನೈವೇದ್ಯದ ಹೊತ್ತಿಗೆ, ಪ್ರವಾದಿ ಎಲೀಯನು ಪೀಠದ ಹತ್ತಿರ ಬಂದು, “ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರೇ, ಸರ್ವೇಶ್ವರಾ, ನೀವೊಬ್ಬರೇ ಇಸ್ರಯೇಲರ ದೇವರಾಗಿರುತ್ತೀರಿ ಎಂಬುದನ್ನು, ನಾನು ನಿನ್ನ ದಾಸನಾಗಿರುತ್ತೇನೆಂಬುದನ್ನು ಹಾಗು ಇದನ್ನೆಲ್ಲಾ ನಿಮ್ಮ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನು ಈ ದಿನ ತೋರಿಸಿಕೊಡಿ.</verse>
				<verse number="37">ನಮಗೆ ಕಿವಿಗೊಡಿ; ಸರ್ವೇಶ್ವರಾ ನಮಗೆ ಕಿವಿಗೊಡಿ; ಸರ್ವೇಶ್ವರನಾದ ನೀವೊಬ್ಬರೇ ದೇವರು ಹಾಗು ಈ ಜನರ ಮನಸ್ಸನ್ನು ನಿಮ್ಮಕಡೆಗೆ ತಿರುಗಿಸಿಕೊಳ್ಳುವವರು ಆಗಿರುತ್ತೀರಿ ಎಂಬುದನ್ನು ಇವರಿಗೆ ತಿಳಿಯಪಡಿಸಿ,” ಎಂದು ಪ್ರಾರ್ಥಿಸಿದನು.</verse>
				<verse number="38">ಕೂಡಲೆ ಸರ್ವೇಶ್ವರನ ಕಡೆಯಿಂದ ಬೆಂಕಿ ಇಳಿದುಬಂದು ಬಲಿಮಾಂಸವನ್ನೂ ಕಟ್ಟಿಗೆ ಕಲ್ಲುಮಣ್ಣುಗಳನ್ನೂ ದಹಿಸಿಬಿಟ್ಟಿತು. ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.</verse>
				<verse number="39">ಜನರೆಲ್ಲರೂ ಅದನ್ನು ಕಂಡು ಬೋರಲಬಿದ್ದರು; “ಸರ್ವೇಶ್ವರನೇ ದೇವರು, ಸರ್ವೇಶ್ವರನೇ ದೇವರು,” ಎಂದು ಕೂಗಿದರು.</verse>
				<verse number="40">ಆಗ ಎಲೀಯನು ಅವರಿಗೆ, “ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ; ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು,” ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಕೊಲ್ಲಿಸಿದನು.</verse>
				<verse number="41">ಅನಂತರ ಎಲೀಯನು ಆಹಾಬನಿಗೆ, “ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ; ದೊಡ್ಡ ಮಳೆಯ ಶಬ್ದವು ಕೇಳಿಸುತ್ತದೆ,” ಎಂದನು.</verse>
				<verse number="42">ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ, ಎಲೀಯನು ಕರ್ಮೆಲಿನ ತುದಿಗೆ ಹೋಗಿ, ಅಲ್ಲಿ ನೆಲದ ಮೇಲೆ ಬಿದ್ದುಕೊಂಡು, ಮೊಣಕಾಲಿನ ಮಧ್ಯೆ ತಲೆಯನ್ನಿಟ್ಟನು.</verse>
				<verse number="43">ಅವನು ತನ್ನ ಸೇವಕನಿಗೆ, “ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು,” ಎಂದು ಆಜ್ಞಾಪಿಸಿದನು. ಸೇವಕನು ಹೋಗಿ, ನೋಡಿಬಂದು ಏನೂ ತೋರುವುದಿಲ್ಲವೆಂದು ಹೇಳಿದನು. ಹೀಗೆ ಅವನನ್ನು ಏಳುಸಾರಿ ಕಳುಹಿಸಿದನು.</verse>
				<verse number="44">ಏಳನೆಯ ಸಾರಿ ಆ ಸೇವಕನು, “ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಲಿದೆ,” ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ, “ನೀನು ಹೋಗಿ ಅಹಾಬನಿಗೆ, ‘ಬೇಗನೆ ರಥವನ್ನು ಹೂಡಿಸಿಕೊಂಡು, ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು’ ಎಂದು ಹೇಳು,” ಎಂದನು.</verse>
				<verse number="45">ತುಸು ಹೊತ್ತಿನಲ್ಲಿಯೇ ಆಕಾಶವು ಕಾರ್ಮೋಡಗಾಳಿಗಳಿಂದ ತುಂಬಿ ದೊಡ್ಡ ಮಳೆ ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕುಳಿತುಕೊಂಡು ಜೆಸ್ರೀಲಿಗೆ ಹೋದನು.</verse>
				<verse number="46">ಸರ್ವೇಶ್ವರನ ಹಸ್ತ ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಜೆಸ್ರೀಲನ್ನು ಸೇರಿದನು.</verse>
			</chapter>
			<chapter number="19">
				<verse number="1">ಎಲೀಯನು ಪ್ರವಾದಿಗಳನ್ನೆಲ್ಲ ಕತ್ತಿಯಿಂದ ಸಂಹರಿಸಿದ್ದನ್ನೂ ಅವನು ಮಾಡಿದ ಬೇರೆ ಎಲ್ಲಾ ಕಾರ್ಯಗಳನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದನು.</verse>
				<verse number="2">ಆಕೆ ಎಲೀಯನ ಬಳಿಗೆ ದೂತರನ್ನು ಕಳುಹಿಸಿ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟುಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೆಹೋದರೆ, ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಹೇಳಿಕಳುಹಿಸಿದಳು.</verse>
				<verse number="3">ಅವನು ಅದನ್ನು ಕೇಳಿದೊಡನೆ ಪ್ರಾಣರಕ್ಷಣೆಗಾಗಿ ಅಲ್ಲಿಂದ ಹೊರಟು ಜುದೇಯದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬೀಳ್ಕೊಟ್ಟನು.</verse>
				<verse number="4">ತರುವಾಯ ತಾನೊಬ್ಬನೇ, ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ದೂರಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. “ಸರ್ವೇಶ್ವರಾ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡಿ; ನನ್ನ ಪೂರ್ವಜರಿಗಿಂತ ನಾನು ಉತ್ತಮನಲ್ಲ,” ಎಂದು ದೇವರನ್ನು ಪ್ರಾರ್ಥಿಸಿದನು.</verse>
				<verse number="5">ಬಳಿಕ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆಮಾಡಿದನು. ಕೂಡಲೆ ಒಬ್ಬ ದೇವದೂತನು ಅವನನ್ನು ತಟ್ಟಿ, “ಎದ್ದು ಊಟಮಾಡು,” ಎಂದು ಹೇಳಿದನು.</verse>
				<verse number="6">ಎಲೀಯನು ಎದ್ದು ಸುತ್ತಲೂ ನೋಡಿದನು. ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ತನ್ನ ತಲೆಯ ಹತ್ತಿರ ಇದ್ದುವು. ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ಪುನಃ ಮಲಗಿದನು.</verse>
				<verse number="7">ಸರ್ವೇಶ್ವರನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ, “ಎದ್ದು ಊಟಮಾಡು; ನೀನು ನಿನ್ನ ಶಕ್ತಿಮೀರುವಷ್ಟು ಪ್ರಯಾಣ ಮಾಡಬೇಕಾಗಿದೆ,” ಎಂದನು.</verse>
				<verse number="8">ಅವನು ಎದ್ದು, ತಿಂದು, ಕುಡಿದು ಅದರ ಬಲದಿಂದ ನಾಲ್ವತ್ತು ದಿವಸ ಹಗಲಿರುಳು ಪ್ರಯಾಣ ಮಾಡಿದನು;</verse>
				<verse number="9">ದೇವಗಿರಿಯಾದ ಹೋರೇಬನ್ನು ಮುಟ್ಟಿ ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಅವನಿಗೆ ಸರ್ವೇಶ್ವರನಿಂದ, “ಎಲೀಯನೇ, ಇಲ್ಲೇನು ಮಾಡುತ್ತಿರುವೆ?” ಎಂಬ ವಾಣಿ ಕೇಳಿಸಿತು.</verse>
				<verse number="10">ಅದಕ್ಕೆ ಅವನು, “ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿ ಇದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ,” ಎಂದು ಉತ್ತರಕೊಟ್ಟನು.</verse>
				<verse number="11">ಆಗ ಇನ್ನೊಮ್ಮೆ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಸರ್ವೇಶ್ವರನ ಮುಂದೆ ನಿಲ್ಲು,” ಎಂದು ವಾಣಿಯಾಯಿತು; ಆಹಾ! ಸರ್ವೇಶ್ವರ ಅಲ್ಲೇ ಹಾದುಹೋದರು, ಅವರ ಮುಂದೆ ಪರ್ವತಗಳನ್ನು ಭೇದಿಸಿ ಬಂಡೆಗಳನ್ನು ಪುಡಿಪುಡಿಮಾಡುವಂಥ ದೊಡ್ಡ ಬಿರುಗಾಳಿ ಬೀಸಿತು; ಸರ್ವೇಶ್ವರ ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವುಂಟಾಯಿತು; ಅದರಲ್ಲೂ ಅವರಿರಲಿಲ್ಲ.</verse>
				<verse number="12">ಭೂಕಂಪವಾದನಂತರ ಸಿಡಿಲು ಉಂಟಾಯಿತು; ಅದರಲ್ಲಿಯೂ ಸರ್ವೇಶ್ವರ ಇರಲಿಲ್ಲ. ಕಡೆಗೊಂದು ಮೆಲುದನಿ!</verse>
				<verse number="13">ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮುಖವನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ, ನೀನು ಇಲ್ಲೇನು ಮಾಡುತ್ತಿರುವೆ?” ಎಂದು ವಾಣಿ ಕೇಳಿಸಿತು.</verse>
				<verse number="14">ಅದಕ್ಕೆ ಅವನು, “ಸೇನಾಧೀಶ್ವರರಾದ ಸರ್ವೇಶ್ವರಾ, ಇಸ್ರಯೇಲರು ನಿಮ್ಮ ನಿಬಂಧನೆಯನ್ನು ಮೀರಿದ್ದಾರೆ; ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ; ನಾನೊಬ್ಬನೇ ಉಳಿದು ನಿಮ್ಮ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದು ಇದ್ದಾರೆ,” ಎಂದು ಉತ್ತರಕೊಟ್ಟನು.</verse>
				<verse number="15">ಆಗ ಸರ್ವೇಶ್ವರ, “ನೀನು ಬಂದ ದಾರಿಯಲ್ಲೇ ಹಿಂದಿರುಗಿ ದಮಸ್ಕದ ಮರುಭೂಮಿಗೆ ಹೋಗು; ಅಲ್ಲಿಂದ ಪಟ್ಟಣದೊಳಗೆ ಹೋಗಿ ಹಜಾಯೇಲನನ್ನು ಸಿರಿಯಾದವರ ಅರಸನನ್ನಾಗಿ ಅಭಿಷೇಕಿಸು;</verse>
				<verse number="16">ನಿಂಷಿಯ ಮಗ ಯೇಹುವನ್ನು, ಇಸ್ರಯೇಲರ ಅರಸನನ್ನಾಗಿ ಅಭಿಷೇಕಿಸು. ಅಬೇಲ್ ಮಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನ್ನ ಉತ್ತರಾಧಿಕಾರಿಯಾದ ಪ್ರವಾದಿಯನ್ನಾಗಿ ಅಭಿಷೇಕಿಸು.</verse>
				<verse number="17">ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು; ಇವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.</verse>
				<verse number="18">ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ ಅದನ್ನು ಮುದ್ದಿಡದೆಯೂ ಇರುವ ಏಳುಸಾವಿರ ಮಂದಿ ಇಸ್ರಯೇಲರನ್ನು ಉಳಿಸುವೆನು,” ಎಂದು ಹೇಳಿದನು.</verse>
				<verse number="19">ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆಯ ಜೋಡಿಯಿಂದ ತಾನಾಗಿ ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.</verse>
				<verse number="20">ಕೂಡಲೆ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ; ಅನಂತರ ನಿನ್ನನ್ನು ಹಿಂಬಾಲಿಸುವೆನು,” ಎಂದನು. ಅದಕ್ಕೆ ಎಲೀಯನು, “ಹೋಗಿ ಬಾ; ನಾನು ನಿನಗೆ ಮಾಡಬೇಕಾದದ್ದನ್ನು ಮಾಡಿದ್ದೇನೆ,” ಎಂದು ಉತ್ತರಕೊಟ್ಟನು.</verse>
				<verse number="21">ಎಲೀಷನು ಹಿಂದಿರುಗಿಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ವಧಿಸಿ ಮಾಂಸವನ್ನು ನೊಗದ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಶಿಷ್ಯನಾದನು.</verse>
			</chapter>
			<chapter number="20">
				<verse number="1">ಸಿರಿಯಾದವರ ಅರಸ ಬೆನ್ಹದದನು ತನ್ನ ಇಡೀ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತು ಎರಡು ಮಂದಿ ರಾಜರೊಡನೆ ಹೊರಟು ಬಂದು, ಸಮಾರಿಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.</verse>
				<verse number="2">ಆ ಪಟ್ಟಣದಲ್ಲಿದ್ದ ಇಸ್ರಯೇಲರ ಅರಸ ಅಹಾಬನ ಬಳಿಗೆ ದೂತರನ್ನು ಕಳುಹಿಸಿದನು.</verse>
				<verse number="3">“ನಿನ್ನ ಬೆಳ್ಳಿಬಂಗಾರವು ನನ್ನದು; ನಿನ್ನ ಪ್ರಿಯ ಸತಿಸುತರರೂ ನನ್ನವರೇ ಎಂದು ತಿಳಿದುಕೋ,” ಎಂಬುದಾಗಿ ಆ ದೂತರಿಂದ ಹೇಳಿಸಿದನು.</verse>
				<verse number="4">ಅದಕ್ಕೆ ಇಸ್ರಯೇಲರ ಆ ಅರಸನು, “ನನ್ನ ಒಡೆಯನಾದ ಅರಸರೇ, ನೀವು ಹೇಳಿದಂತೆ ನಾನು ನಿಮ್ಮವನೇ; ನನಗಿರುವುದೆಲ್ಲವೂ ನಿಮ್ಮದೇ,” ಎಂದು ಉತ್ತರಕೊಟ್ಟು ಕಳುಹಿಸಿದನು.</verse>
				<verse number="5">ಆ ದೂತರು ಮರಳಿ ಅಹಾಬನ ಬಳಿಗೆ ಬಂದು, “ನಿನ್ನ ಬೆಳ್ಳಿಬಂಗಾರವನ್ನೂ ಸತಿಸುತರನ್ನೂ ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿಕಳುಹಿಸಿದೆನಲ್ಲವೆ?</verse>
				<verse number="6">ನಾಳೆ ಇಷ್ಟುಹೊತ್ತಿಗೆ ನನ್ನ ಆಳುಗಳನ್ನು ಕಳುಹಿಸುವೆನು; ಅವರು ನಿನ್ನ ಮತ್ತು ನಿನ್ನ ಅಧಿಕಾರಿಗಳ ಮನೆಗಳನ್ನು ಶೋಧಿಸಿ, ನಿಮಗೆ ಅಮೂಲ್ಯವಾದುವುಗಳನ್ನೆಲ್ಲಾ ತೆಗೆದುಕೊಳ್ಳುವರು ಎಂಬುದಾಗಿ ಬೆನ್ಹದದನು ತಿಳಿಸುತ್ತಾರೆ,” ಎಂದು ಹೇಳಿದರು.</verse>
				<verse number="7">ಆಗ ಇಸ್ರಯೇಲರ ಆ ಅರಸನು ನಾಡಿನ ಎಲ್ಲ ಹಿರಿಯರನ್ನು ಕರೆಸಿ ಅವರಿಗೆ, “ನೋಡಿದಿರೋ, ಅವನು ನಮಗೆಂಥ ಕೇಡು ಬಗೆಯುತ್ತಾನೆ; ‘ನಿನ್ನ ಬೆಳ್ಳಿಬಂಗಾರವನ್ನೂ ಸತಿಸುತರನ್ನೂ ನನಗೆ ಕೊಡು’ ಎಂದು ಹೇಳಿಕಳುಹಿಸಿದ್ದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ,” ಎಂದು ಹೇಳಿದನು.</verse>
				<verse number="8">ಹಿರಿಯರೆಲ್ಲರೂ ಜನಸಾಮಾನ್ಯರೂ ಅವನಿಗೆ, “ನೀವು ಈ ಮಾತಿಗೆ ಒಪ್ಪಬೇಡಿ,” ಎಂದರು.</verse>
				<verse number="9">ಆದುದರಿಂದ ಅವನು ಬಂದಂಥ ದೂತರ ಮುಖಾಂತರ ಬೆನ್ಹದದನಿಗೆ, “ನನ್ನ ಒಡೆಯರೇ, ಅರಸರೇ, ನಾನು ನಿಮ್ಮ ಮೊದಲನೆಯ ಮಾತಿಗೆ ಒಪ್ಪಿ ಅದರಂತೆ ಮಾಡಲು ಸಿದ್ಧನಾಗಿರುತ್ತೇನೆ; ಆದರೆ ಎರಡನೆಯ ಮಾತಿಗೆ ಒಪ್ಪಲಾರೆ,” ಎಂದು ಹೇಳಿಕಳುಹಿಸಿದನು ದೂತರು ಬಂದು ಈ ಮಾತುಗಳನ್ನು ಬೆನ್ಹದದನಿಗೆ ತಿಳಿಸಿದರು.</verse>
				<verse number="10">ಆಗ ಅವರು ಅಹಾಬನಿಗೆ, “ಸಮಾರಿಯ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡುವೆನು; ಲೆಕ್ಕವಿಲ್ಲದ ನನ್ನ ಸೈನಿಕರು ಅದರಲ್ಲಿ ಒಂದು ಹಿಡಿ ಧೂಳನ್ನೂ ಬಿಡುವುದಿಲ್ಲ; ಬಿಟ್ಟರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಹೇಳಿಕಳುಹಿಸಿದನು.</verse>
				<verse number="11">ಬಂದ ದೂತರಿಗೆ ಇಸ್ರಯೇಲರ ಅರಸನು, “ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಕೊಚ್ಚಿಕೊಳ್ಳಬಾರದು ಎಂದು ಅವನಿಗೆ ಹೇಳಿರಿ,” ಎಂದನು.</verse>
				<verse number="12">ತನ್ನ ರಾಜರುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೇ, ಪಟ್ಟಣಕ್ಕೆ ಲಗ್ಗೆ ಹತ್ತುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.</verse>
				<verse number="13">ಆಗ ಒಬ್ಬ ಪ್ರವಾದಿ ಇಸ್ರಯೇಲರ ಅರಸ ಅಹಾಬನ ಬಳಿಗೆ ಬಂದು ಅವನಿಗೆ, “ಈ ಮಹಾಸಮೂಹವನ್ನು ನೋಡಿದಿಯೋ? ‘ನಾನೇ ಸರ್ವೇಶ್ವರ’ ಎಂಬುದು ನಿನಗೆ ಮನದಟ್ಟಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೊಪ್ಪಿಸುವೆನು, ಎನ್ನುತ್ತಾರೆ ಸರ್ವೇಶ್ವರ,” ಎಂದು ಹೇಳಿದನು.</verse>
				<verse number="14">ಅಹಾಬನು, “ಇದು ಯಾರ ಮುಖಾಂತರ ಆಗುವುದು?” ಎಂದು ಕೇಳಿದ್ದಕ್ಕೆ ಅವನು, “ಪ್ರದೇಶಾಧಿಪತಿಗಳ ಸೇವಕರ ಮುಖಾಂತರ ಆಗುವುದೆಂದು ಸರ್ವೇಶ್ವರ ತಿಳಿಸುತ್ತಾರೆ,” ಎಂದು ಉತ್ತರಕೊಟ್ಟನು. ಅಹಾಬನು ಮುಂದುವರಿದು, “ಯುದ್ಧ ಪ್ರಾರಂಭಮಾಡತಕ್ಕವರಾರು?” ಎಂದು ಕೇಳಲು ಅವನು, “ನೀನೇ” ಎಂದು ಉತ್ತರಿಸಿದನು.</verse>
				<verse number="15">ಅಹಾಬನು ಪ್ರದೇಶಾಧಿಪತಿಗಳ ಆಳುಗಳನ್ನು ಲೆಕ್ಕಿಸಿದಾಗ ಇನ್ನೂರ ಮೂವತ್ತೆರಡು ಮಂದಿ ಇದ್ದರು; ಇಸ್ರಯೇಲರ ಸೈನ್ಯವನ್ನು ಲೆಕ್ಕಿಸಿದಾಗ ಏಳು ಸಾವಿರ ಮಂದಿಯಿದ್ದರು.</verse>
				<verse number="16">ಮಧ್ಯಾಹ್ನದಲ್ಲಿ, ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಮಂದಿ ರಾಜರ ಸಂಗಡ ಮದ್ಯಪಾನಮಾಡಿ ಮತ್ತನಾಗಿ, ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.</verse>
				<verse number="17">ಪ್ರದೇಶಾಧಿಪತಿಗಳ ಆಳುಗಳು ಮೊದಲು ಬಂದರು, “ಸಮಾರಿಯದ ಜನರು ಹೊರಗೆ ಬಂದಿರುತ್ತಾರೆ” ಎಂದು ಬೆನ್ಹದದನ ಕಾವಲುಗಾರರು ಅವನಿಗೆ ತಿಳಿಸಿದರು. ಅವನು,</verse>
				<verse number="18">“ಅವರು ಯುದ್ಧಕ್ಕಾಗಿಯೇ ಬಂದಿರಲಿ, ಸಮಾಧಾನಕ್ಕಾಗಿಯೇ ಬಂದಿರಲಿ, ಅವರನ್ನು ಸಜೀವಿಗಳನ್ನಾಗಿ ಹಿಡಿದುತನ್ನಿ,” ಎಂದು ಆಜ್ಞಾಪಿಸಿದನು.</verse>
				<verse number="19">ಮೊದಲು ಹೊರಟು ಬಂದ ಪ್ರದೇಶಾಧಿಪತಿಗಳ ಆಳುಗಳ ಹಿಂದೆಯೇ ಇಸ್ರಯೇಲ್ ಸೈನ್ಯದವರೂ ಬಂದರು.</verse>
				<verse number="20">ಅವರಲ್ಲಿ ಪ್ರತಿಯೊಬ್ಬನು ತನ್ನ ಎದುರಿಗೆ ಬಂದ ವಿರೋಧಿಯನ್ನು ಕೊಲ್ಲುತ್ತಾ ಮುಂದೆ ನಡೆದನು; ಸಿರಿಯಾದವರು ಓಡಿಹೋಗತೊಡಗಿದರು. ಇಸ್ರಯೇಲರು ಅವರನ್ನು ಹಿಂದಟ್ಟಿದರು. ಅರಸ ಬೆನ್ಹದದನು ಹಾಗು ಕೆಲವು ಮಂದಿ ರಾಹುತರು ಕುದುರೆಗಳನ್ನೇರಿ ಓಡಿಹೋಗಿ ತಪ್ಪಿಸಿಕೊಂಡರು.</verse>
				<verse number="21">ಇಸ್ರಯೇಲರ ಅರಸನು ಹೊರಟುಬಂದು ಸಿರಿಯಾದವರ ರಥಾಶ್ವಬಲಗಳನ್ನು ಸೋಲಿಸಿ, ಮಹಾಸಮೂಹವನ್ನು ಸಂಹರಿಸಿದನು.</verse>
				<verse number="22">ಆಗ ಆ ಪ್ರವಾದಿ ಮತ್ತೆ ಇಸ್ರಯೇಲರ ಅರಸನ ಬಳಿಗೆ ಬಂದನು. “ಸಿರಿಯಾದವರ ಅರಸನು ಮುಂದಿನ ವರ್ಷ ಇನ್ನೊಮ್ಮೆ ನಿನ್ನ ಮೇಲೆ ದಾಳಿಮಾಡಬರುವನು; ಆದುದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ; ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬುದನ್ನು ಪರ್ಯಾಲೋಚಿಸು,” ಎಂದು ಎಚ್ಚರಿಸಿದನು.</verse>
				<verse number="23">ಸಿರಿಯಾದವರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ, “ಇಸ್ರಯೇಲರ ದೇವರು ಬೆಟ್ಟಗಳ ದೇವರಾಗಿರುವುದರಿಂದ ಅವರು ನಮ್ಮನ್ನು ಸೋಲಿಸಿದರು; ನಾವು ಅವರೊಡನೆ ಬಯಲಿನಲ್ಲಿ ಯುದ್ಧಮಾಡುವುದಾದರೆ ಖಂಡಿತವಾಗಿ ಜಯಹೊಂದುವೆವು.</verse>
				<verse number="24">ನೀವು ಆಯಾ ಸ್ಥಳಗಳಲ್ಲಿರುವ ರಾಜರನ್ನು ತೆಗೆದುಹಾಕಿ, ಅವರಿಗೆ ಬದಲಾಗಿ ಪ್ರದೇಶಾಧಿಪತಿಗಳನ್ನು ನೇಮಿಸಿರಿ.</verse>
				<verse number="25">ನಮ್ಮ ಸೈನ್ಯದಿಂದ ನಷ್ಟವಾಗಿಹೋದಷ್ಟು ಜನರನ್ನೂ ಕುದುರೆಗಳನ್ನೂ ರಥಗಳನ್ನೂ ಮತ್ತೆ ಕೂಡಿಸಿ ಅವರೊಡನೆ ಬಯಲಿನಲ್ಲಿ ಯುದ್ಧಮಾಡೋಣ; ನಮಗೆ ಹೇಗೂ ಜಯಸಿಕ್ಕುವುದು ನಿಶ್ಚಯ,” ಎಂದು ಹೇಳಿದರು. ಅವನು ಅದರ ಅಂತೆಯೇ ಮಾಡಿದನು.</verse>
				<verse number="26">ಒಂದು ವರ್ಷ ದಾಟಿದನಂತರ ಬೆನ್ಹದದನು ಸಿರಿಯಾದವರನ್ನು ಕೂಡಿಸಿಕೊಂಡು ಇಸ್ರಯೇಲರೊಡನೆ ಯುದ್ಧಮಾಡುವುದಕ್ಕಾಗಿ ಅಫೇಕಕ್ಕೆ ಬಂದನು.</verse>
				<verse number="27">ಇಸ್ರಯೇಲರು ಸಹ ಆಹಾರ ಸಾಮಗ್ರಿಗಳನ್ನು ಒದಗಿಸಿಕೊಂಡು ಅವರಿಗೆ ವಿರುದ್ಧ ಕೂಡಿಬಂದರು. ಸಿರಿಯಾದವರು ನಾಡಿನಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರು. ಆಡುಮರಿಗಳ ಎರಡು ಹಿಂಡುಗಳಂತಿದ್ದ ಇಸ್ರಯೇಲರು ಅವರ ಎದುರಿನಲ್ಲೇ ಪಾಳೆಯಮಾಡಿಕೊಂಡರು.</verse>
				<verse number="28">ಆಗ ದೈವಪುರುಷನೊಬ್ಬನು ಇಸ್ರಯೇಲರ ಅಹಾಬನ ಬಳಿಗೆ ಬಂದು, “ಸರ್ವೇಶ್ವರ ಹೀಗೆನ್ನುತ್ತಾರೆ, ‘ಸರ್ವೇಶ್ವರ ಕಣಿವೆಗಳ ದೇವರಲ್ಲ, ಬೆಟ್ಟಗಳ ದೇವರಾಗಿ ಮಾತ್ರ ಇರುತ್ತಾರೆಂದುಕೊಂಡು ಬಂದಿರುವ ಈ ಸಿರಿಯಾದವರ ಮಹಾಸೈನ್ಯವನ್ನು ನಿನ್ನ ಕೈಗೆ ಒಪ್ಪಿಸುವೆನು; ಇದರಿಂದ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು,” ಎಂದು ಹೇಳಿದನು.</verse>
				<verse number="29">ಈ ಎರಡು ಸೈನ್ಯಗಳೂ ಏಳುದಿನಗಳವರೆಗೆ ಎದುರುಬದುರಾಗಿ ಪಾಳೆಯಮಾಡಿಕೊಂಡಿದ್ದವು; ಏಳನೆಯ ದಿನದಲ್ಲಿ ಯುದ್ಧಪ್ರಾರಂಭವಾಯಿತು. ಇಸ್ರಯೇಲರು ಆ ಒಂದೇ ದಿನದಲ್ಲಿ ಸಿರಿಯಾದವರ ಒಂದು ಲಕ್ಷಮಂದಿ ಕಾಲಾಳುಗಳನ್ನು ವಧಿಸಿದರು.</verse>
				<verse number="30">ಉಳಿದ ಇಪ್ಪತ್ತೇಳು ಸಾವಿರಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು. ಆದರೆ ಆ ಪಟ್ಟಣದ ಗೋಡೆ ಅವರ ಮೇಲೆ ಬಿದ್ದುದರಿಂದ ಅವರೂ ಸತ್ತರು. ಬೆನ್ಹದದನೂ ಆ ಪಟ್ಟಣವನ್ನು ಹೊಕ್ಕು, ಒಂದು ಮನೆಯ ಒಳಕೋಣೆಯಲ್ಲಿ ಅಡಗಿಕೊಂಡನು.</verse>
				<verse number="31">ಆಗ ಅವನ ಅಧಿಕಾರಿಗಳು, “ಇಸ್ರಯೇಲರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ; ಆದುದರಿಂದ ಸೊಂಟಕ್ಕೆ ಗೋಣೀತಟ್ಟು ಕಟ್ಟಿಕೊಂಡು, ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಆ ಅರಸನ ಬಳಿಗೆ ಹೋಗುವುದಕ್ಕೆ ನಮಗೆ ಅಪ್ಪಣೆಯಾಗಲಿ; ಹೀಗೆ ಮಾಡಿದರೆ ಅವನು ತಮ್ಮ ಜೀವವನ್ನು ಉಳಿಸಬಹುದು,” ಎಂದು ಹೇಳಿದರು.</verse>
				<verse number="32">ಅವರು ಸೊಂಟಕ್ಕೆ ಗೋಣೀತಟ್ಟು ಕಟ್ಟಿಕೊಂಡು ಕುತ್ತಿಗೆಗೆ ಹಗ್ಗ ಸುತ್ತಿಕೊಂಡು ಇಸ್ರಯೇಲರ ಅರಸನ ಬಳಿಗೆ ಬಂದು, “ಜೀವದಾನ ಮಾಡಬೇಕೆಂದು ನಿಮ್ಮ ಸೇವಕನಾದ ಬೆನ್ಹದದನು ವಿಜ್ಞಾಪಿಸುತ್ತಾನೆ,” ಎಂದರು. ಆಗ ಅವನು, “ಬೆನ್ಹದದನು ಇನ್ನೂ ಜೀವದಿಂದಿರುತ್ತಾನೋ? ಅವನು ನನ್ನ ಸಹೋದರನು,” ಎಂದು ಉತ್ತರಕೊಟ್ಟನು.</verse>
				<verse number="33">ಅವರು ಈ ಮಾತು ಶುಭವಚನವೆಂದು ನೆನೆಸಿ, ಕೂಡಲೆ ಅವನ ಮಾತನ್ನೇ ಅನುಮೋದಿಸಿ, “ಬೆನ್ಹದದನು ನಿಮ್ಮ ಸಹೋದರನೇ ಹೌದು,” ಎಂದರು. ಅವನು ಅವರಿಗೆ, “ಹೋಗಿ ಬೆನ್ಹದದನನ್ನು ಕರೆದುಕೊಂಡು ಬನ್ನಿ,” ಎಂದು ಆಜ್ಞಾಪಿಸಿದನು. ಅವನು ಬಂದಾಗ ಅವನನ್ನು ತನ್ನ ರಥದಲ್ಲೇ ಕುಳ್ಳಿರಿಸಿಕೊಂಡನು.</verse>
				<verse number="34">ಬೆನ್ಹದದನು ಅವನಿಗೆ, “ನನ್ನ ತಂದೆ, ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ; ಅವನು ಸಮಾರಿಯಾದಲ್ಲಿ ಮಾಡಿದಂತೆ ನೀನೂ ನನಗಾಗಿ ದಮಸ್ಕದಲ್ಲಿ ಕೆಲವು ವ್ಯಾಪಾರ ಕೇಂದ್ರಗಳನ್ನು ಸ್ಥಾಪಿಸಿಕೊಳ್ಳಬಹುದು,” ಎಂದು ಹೇಳಿದನು. ಅಹಾಬನು, “ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ,” ಎಂದು ಹೇಳಿ, ಅವನಿಂದ ಪ್ರಮಾಣಮಾಡಿಸಿ ಕಳುಹಿಸಿಬಿಟ್ಟನು.</verse>
				<verse number="35">ಪ್ರವಾದಿಮಂಡಲಿಯವರಲ್ಲಿ ಒಬ್ಬನು, ಸರ್ವೇಶ್ವರನಿಂದ ಪ್ರೇರಿತನಾಗಿ ತನ್ನ ಜೊತೆಗಾರನೊಬ್ಬನಿಗೆ, “ನನ್ನನ್ನು ಹೊಡೆ,” ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.</verse>
				<verse number="36">ಆಗ ಆ ಪ್ರವಾದಿ ಅವನಿಗೆ, “ನೀನು ಸರ್ವೇಶ್ವರನ ಮಾತನ್ನು ಕೇಳದೆಹೋದುದರಿಂದ ನನ್ನನ್ನು ಬಿಟ್ಟು ಹೊರಟಕೂಡಲೆ ಒಂದು ಸಿಂಹವು ಬಂದು ನಿನ್ನನ್ನು ಕೊಲ್ಲುವುದು,” ಎಂದನು. ಅಂತೆಯೇ ಅವನು ಇವನನ್ನು ಬಿಟ್ಟುಹೋದ ಕೂಡಲೆ, ಒಂದು ಸಿಂಹವು ಬಂದು ಅವನನ್ನು ಕೊಂದುಹಾಕಿತು.</verse>
				<verse number="37">ಅನಂತರ ಆ ಪ್ರವಾದಿ ಇನ್ನೊಬ್ಬನನ್ನು ನೋಡಿ, “ನನ್ನನ್ನು ಹೊಡೆ,” ಎಂದು ಬೇಡಿಕೊಂಡನು. ಅವನು ಇವನನ್ನು ಗಾಯವಾಗುವಷ್ಟು ಹೊಡೆದನು.</verse>
				<verse number="38">ಆಗ ಇವನು ತನ್ನ ಗುರುತು ತಿಳಿಯಬಾರದೆಂದು ರುಮಾಲಿನಿಂದ ಕಣ್ಣುಗಳನ್ನು ಮುಚ್ಚಿಕೊಂಡು, ಅರಸನು ಬರುವ ದಾರಿಯಲ್ಲಿ ಕಾದು ನಿಂತನು.</verse>
				<verse number="39">ಅರಸನು ಹಾದುಹೋಗುವಾಗ ಅವನಿಗೆ, “ನಿಮ್ಮ ಸೇವಕನಾದ ನಾನು ಯುದ್ಧಕ್ಕೆ ಹೋಗಿದ್ದಾಗ ರಣರಂಗದಲ್ಲಿ ಒಬ್ಬನು, ಇನ್ನೊಬ್ಬನನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದು, ‘ನೀನು ಇವನನ್ನು ಕಾಯಬೇಕು, ಇವನು ತಪ್ಪಿಸಿಕೊಂಡರೆ ಇವನ ಪ್ರಾಣಕ್ಕೆ ನಿನ್ನ ಪ್ರಾಣವು ನನ್ನದಾಗಿರುವುದು; ಇಲ್ಲವೆ ನೀನು ನನಗೆ ಮೂರು ಸಾವಿರ ಬೆಳ್ಳಿನಾಣ್ಯವನ್ನು ಕೊಡಬೇಕು’ ಎಂದು ಆಜ್ಞಾಪಿಸಿದನು.</verse>
				<verse number="40">ನಾನು ಬೇರೆ ಕೆಲಸದಲ್ಲಿದ್ದಾಗ ಆ ವ್ಯಕ್ತಿ ತಪ್ಪಿಸಿಕೊಂಡು ಹೋದನು,” ಎಂದು ಮೊರೆಯಿಟ್ಟನು. ಇಸ್ರಯೇಲರ ಅರಸನು ಇವನಿಗೆ, “ನಿನಗೆ ಆ ತೀರ್ಪು ಸರಿಯಾಗಿದೆ; ತೀರ್ಮಾನಿಸಿದವನು ನೀನೇ ಅಲ್ಲವೇ?’ ಎಂದು ನುಡಿದನು.</verse>
				<verse number="41">ಕೂಡಲೆ ಆ ಪ್ರವಾದಿ ಕಣ್ಣುಗಳ ಮೇಲಿನಿಂದ ರುಮಾಲನ್ನು ತೆಗೆದನು. ಅವನು ಪ್ರವಾದಿಗಳಲ್ಲೊಬ್ಬನೆಂದು ಇಸ್ರಯೇಲರ ಅರಸನಿಗೆ ಗೊತ್ತು ಆಯಿತು.</verse>
				<verse number="42">ಆಗ ಆ ಪ್ರವಾದಿ ಅರಸನಿಗೆ, “ಸಂಹರಿಸಬೇಕೆಂದು ಹೇಳಿ ನಾನು ನಿನ್ನ ಕೈಗೆ ಒಪ್ಪಿಸಿದ ವ್ಯಕ್ತಿಯನ್ನು ನೀನು ಹೋಗಿಬಿಟ್ಟದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು; ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು, ಎನ್ನುತ್ತಾರೆ ಸರ್ವೇಶ್ವರ,” ಎಂದು ಹೇಳಿದನು.</verse>
				<verse number="43">ಇಸ್ರಯೇಲರ ಅರಸನು ಸಿಟ್ಟಿನಿಂದ, ಗಂಟುಮೋರೆ ಮಾಡಿಕೊಂಡು, ಸಮಾರಿಯದಲ್ಲಿ ಇದ್ದ ತನ್ನ ಮನೆಗೆ ಹೋದನು.</verse>
			</chapter>
			<chapter number="21">
				<verse number="1">ಅನಂತರ ಸಂಭವಿಸಿದ ಘಟನೆಗಳು ಇವು; ಜೆಸ್ರೀಲಿನಲ್ಲಿ, ಸಮಾರಿಯದ ಅರಸ ಅಹಾಬನ ಅರಮನೆಯ ಹತ್ತಿರ ಜೆಸ್ರೀಲಿನವನಾದ ನಾಬೋತನೆಂಬ ವ್ಯಕ್ತಿಗೆ ಒಂದು ದ್ರಾಕ್ಷೀತೋಟವಿತ್ತು.</verse>
				<verse number="2">ಅಹಾಬನು ಆ ನಾಬೋತನಿಗೆ, “ನಿನ್ನ ದ್ರಾಕ್ಷೀತೋಟವನ್ನು ನನಗೆ ಕೊಡು; ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುತ್ತೇನೆ; ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ; ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ,” ಎಂದು ಹೇಳಿದನು.</verse>
				<verse number="3">ಅದಕ್ಕೆ ನಾಬೋತನು, “ಪಿತ್ರಾರ್ಜಿತ ಸೊತ್ತನ್ನು ನಿಮಗೆ ಮಾರದಂತೆ ಸರ್ವೇಶ್ವರ ನನ್ನನ್ನು ತಡೆಯಲಿ!” ಎಂದು ಉತ್ತರಕೊಟ್ಟನು.</verse>
				<verse number="4">ಪಿತ್ರಾರ್ಜಿತ ಸೊತ್ತನ್ನು ನಿನಗೆ ಕೊಡುವುದಿಲ್ಲವೆಂದು ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟುಗೊಂಡನು; ಗಂಟುಮೋರೆ ಮಾಡಿಕೊಂಡು ಮನೆಗೆ ಹೋಗಿ, ಊಟಮಾಡಲೊಲ್ಲದೆ ಮಂಚದ ಮೇಲೆ ಮಲಗಿ, ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.</verse>
				<verse number="5">ಆಗ ಅವನ ಹೆಂಡತಿ ಈಜೆಬೆಲಳು ಅವನ ಬಳಿಗೆ ಬಂದು, “ನೀವೇಕೆ ಊಟಮಾಡುವುದಿಲ್ಲ? ನಿಮಗೆ ಯಾವ ಚಿಂತೆ?” ಎಂದು ಕೇಳಿದಳು.</verse>
				<verse number="6">ಅವನು, “ನಾನು ಜೆಸ್ರೀಲಿನವನಾದ ನಾಬೋತನಿಗೆ, ‘ನಿನ್ನ ದ್ರಾಕ್ಷೀತೋಟವನ್ನು ನನಗೆ ಮಾರಿಬಿಡು; ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷೀತೋಟವನ್ನು ಕೊಡುತ್ತೇನೆ ಎಂದು ಹೇಳಿದೆ; ಆದರೆ ಅವನು ಕೊಡುವುದಿಲ್ಲ ಎಂದುಬಿಟ್ಟ,” ಎಂದು ಉತ್ತರಕೊಟ್ಟನು.</verse>
				<verse number="7">ಆಗ ಅವನ ಹೆಂಡತಿ ಈಜೆಬೆಲಳು, “ಇಸ್ರಯೇಲರ ಅರಸರಾದ ನೀವು ಹೀಗೆ ವರ್ತಿಸುವುದೇ! ಎದ್ದು ಊಟಮಾಡಿ, ಸಂತೋಷದಿಂದಿರಿ; ನಾನು ನಿಮಗೆ ಜೆಸ್ರೀಲಿನವನಾದ ನಾಬೋತನ ದ್ರಾಕ್ಷೀತೋಟವನ್ನು ಕೊಡುತ್ತೇನೆ,” ಎಂದು ನುಡಿದಳು.</verse>
				<verse number="8">ಅಂತೆಯೇ ಅಹಾಬನ ಹೆಸರಿನಲ್ಲಿ ಒಂದು ಪತ್ರವನ್ನು ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.</verse>
				<verse number="9">ಅದರಲ್ಲಿ, “ಎಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿರಿ: ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿರಿ;</verse>
				<verse number="10">ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬುದಾಗಿ ಇಬ್ಬರು ದುಷ್ಟಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿರಿ; ಅವನನ್ನು ಹೊರಗೆ ಒಯ್ದು, ಕಲ್ಲೆಸೆದು ಕೊಲ್ಲಿರಿ,” ಎಂದು ಬರೆದಿದ್ದಳು.</verse>
				<verse number="11">ಅವನ ಊರಿನ ಹಿರಿಯರೂ ಪ್ರಧಾನಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು.</verse>
				<verse number="12">ಉಪವಾಸವನ್ನು ಪ್ರಕಟಿಸಿದರು, ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು;</verse>
				<verse number="13">ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತರು. ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬುದಾಗಿ ಜನರ ಎದುರಿನಲ್ಲೆ ಅವನಿಗೆ ವಿರುದ್ಧ ಸಾಕ್ಷಿಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.</verse>
				<verse number="14">ನಾಬೋತನು ಕಲ್ಲೆಸೆತದಿಂದ ಸತ್ತ ಸಮಾಚಾರವನ್ನು ಆ ಹಿರಿಯರು ಈಜೆಬೆಲಳಿಗೆ ಮುಟ್ಟಿಸಿದರು.</verse>
				<verse number="15">ಆಕೆ ಇದನ್ನು ಕೇಳಿ ಅಹಾಬನಿಗೆ, “ನೀವು ಹೋಗಿ ನಾಬೋತನು ಮಾರುವುದಿಲ್ಲವೆಂದು ಹೇಳಿದ ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳಿ. ಅವನು ಜೀವದಿಂದಿಲ್ಲ, ಸತ್ತನು,” ಎಂದು ಹೇಳಿದಳು.</verse>
				<verse number="16">ಜೆಸ್ರೀಲಿನವನಾದ ನಾಬೋತನ ಮರಣವಾರ್ತೆಯನ್ನು ಅಹಾಬನು ಕೇಳಿ, ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋದನು.</verse>
				<verse number="17">ಆಗ ತಿಷ್ಬೀಯನಾದ ಎಲೀಯನಿಗೆ ಸರ್ವೇಶ್ವರನ ವಾಣಿವುಂಟಾಯಿತು.</verse>
				<verse number="18">“ನೀನು ಹೋಗಿ ಸಮಾರಿಯಲ್ಲಿ ವಾಸಿಸುವ ಇಸ್ರಯೇಲ್ ಅರಸನನ್ನು ಕಾಣು; ಅವನು ಈಗ ನಾಬೋತನ ದ್ರಾಕ್ಷೀತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅಲ್ಲಿಗೆ ಹೋಗಿದ್ದಾನೆ;</verse>
				<verse number="19">ಅವನಿಗೆ, “ನೀನು ಕೊಲೆಮಾಡಿ, ಸೊತ್ತನ್ನು ಸಂಪಾದಿಸಿಕೊಂಡೆಯಲ್ಲವೇ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವುವು, ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು.”</verse>
				<verse number="20">ಅಹಾಬನು ಎಲೀಯನನ್ನು ನೋಡಿ, “ಎಲೈ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ?” ಎಂದು ಕೇಳಿದನು. ಅವನು, “ಹೌದು, ಕಂಡುಹಿಡಿದೆ, ನೀನು ನಿನ್ನನ್ನು ಪಾಪಕ್ಕೆ ಮಾರಿಬಿಟ್ಟು, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದೆ.</verse>
				<verse number="21">ಸರ್ವೇಶ್ವರ ನಿನ್ನನ್ನು ಕುರಿತು, ‘ನಾನು ನಿನ್ನ ಮೈಮೇಲೆ ಕೇಡನ್ನು ಬರಮಾಡಿ, ನಿನ್ನನ್ನು ಕಸದಂತೆ ತೆಗೆದುಹಾಕುವೆನು; ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ಪರತಂತ್ರರಾಗಲಿ ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ಕಡಿದುಬಿಡುವೆನು.</verse>
				<verse number="22">ನೀನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿ, ನನಗೆ ಕೋಪವನ್ನೆಬ್ಬಿಸಿದ್ದರಿಂದ ನೆಬಾಟನ ಮಗ ಯಾರೊಬ್ಬಾಮನ ಮನೆಗೂ ಅಹೀಯನ ಮಗ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವುದು,’ ಎನ್ನುತ್ತಾರೆ.</verse>
				<verse number="23">ಇದಲ್ಲದೆ ಈಜೆಬೆಲಳನ್ನು ಕುರಿತು ಅವರು, ‘ನಾಯಿಗಳು ಜೆಸ್ರೀಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವುವು;</verse>
				<verse number="24">ಅಹಾಬನ ಮನೆಯವರಲ್ಲಿ ಊರೊಳಗೆ ಸಾಯುವಂಥವರನ್ನು ನಾಯಿಗಳೂ ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವುವು’ ಎಂದು ಹೇಳುತ್ತಾರೆ,” ಎಂದನು.</verse>
				<verse number="25">ಹೆಂಡತಿ ಈಜೆಬೆಲಳಿಂದ ಪ್ರಚೋದಿತನಾಗಿ ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.</verse>
				<verse number="26">ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆ ಬಹಳ ಅಸಹ್ಯವಾಗಿತ್ತು.</verse>
				<verse number="27">ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಯನ್ನು ದುಃಖದಿಂದ ಹರಿದುಕೊಂಡನು; ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು ಉಪವಾಸ ಮಾಡುತ್ತಾ ದೀನಮನಸ್ಸಿನಿಂದ ವರ್ತಿಸಿದನು.</verse>
				<verse number="28">ಆದುದರಿಂದ ಸರ್ವೇಶ್ವರ ತಿಷ್ಬೀಯನಾದ ಎಲೀಯನಿಗೆ,</verse>
				<verse number="29">“ಅಹಾಬನು ನನ್ನ ಮುಂದೆ ತನ್ನನ್ನೇ ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ಹೀಗೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡಿಸುವುದಿಲ್ಲ. ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಬರಮಾಡುವೆನು,” ಎಂದು ಹೇಳಿದರು.</verse>
			</chapter>
			<chapter number="22">
				<verse number="1">ಮೂರು ವರ್ಷಗಳವರೆಗೆ ಇಸ್ರಯೇಲರಿಗೂ ಸಿರಿಯಾದವರಿಗೂ ಯುದ್ಧ ನಡೆಯಲಿಲ್ಲ.</verse>
				<verse number="2">ಮೂರನೆಯ ವರ್ಷದಲ್ಲಿ ಯೆಹೂದ್ಯರ ಅರಸ ಯೆಹೋಷಾಫಾಟನು ಇಸ್ರಯೇಲರ ಅರಸನ ಬಳಿಗೆ ಬಂದನು.</verse>
				<verse number="3">ಆಗ ಇಸ್ರಯೇಲರ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ಪಟ್ಟಣ ನಮ್ಮದೆಂದು ನಿಮಗೆ ಗೊತ್ತುಂಟಲ್ಲವೆ; ಅದನ್ನು ಇಷ್ಟರವರೆಗೂ ಸಿರಿಯಾದವರ ಅರಸನಿಂದ ತಿರುಗಿ ತೆಗೆದುಕೊಳ್ಳದೆ ಸುಮ್ಮನೆ ಕುಳಿತಿರುತ್ತೇವೆ,” ಎಂದು ಹೇಳಿದನು.</verse>
				<verse number="4">ಯೆಹೋಷಾಫಾಟನನ್ನು, “ಯುದ್ಧಮಾಡುವುದಕ್ಕೆ ನೀನೂ ನಮ್ಮ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತಿಯೋ?’ ಎಂದು ಕೇಳಿದನು. ಅವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.</verse>
				<verse number="5">ಮಾತ್ರವಲ್ಲ, “ಸರ್ವೇಶ್ವರನ ಸನ್ನಿಧಿಯಲ್ಲಿ ಈಗಲೆ ವಿಚಾರಿಸು,” ಎಂದು ಇಸ್ರಯೇಲರ ಅರಸನನ್ನು ಬೇಡಿಕೊಂಡನು.</verse>
				<verse number="6">ಆಗ ಇಸ್ರಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ಸರ್ವೇಶ್ವರ ಅದನ್ನು ಕೈಗೆ ಒಪ್ಪಿಸುವರು,” ಎಂದರು.</verse>
				<verse number="7">ಆದರೆ ಯೆಹೋಷಾಫಾಟನು ಇಸ್ರಯೇಲರ ಅರಸನನ್ನು, “ಸರ್ವೇಶ್ವರನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಯಿಲ್ಲವೇ?’ ಎಂದು ಕೇಳಿದನು.</verse>
				<verse number="8">ಅವನು, “ನಮಗಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ,” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸರು ಹಾಗನ್ನಬಾರದು,” ಎಂದನು.</verse>
				<verse number="9">ಆಗ ಇಸ್ರಯೇಲರ ಅರಸನು ಒಬ್ಬ ಕಂಚುಕಿಯನ್ನು ಕರೆದು, “ಬೇಗ ಹೋಗಿ ಇಮ್ಲನ ಮಗ ಮೀಕಾಯೆಹುವನ್ನು ಕರೆದುಕೊಂಡು ಬಾ,” ಎಂದು ಆಜ್ಞಾಪಿಸಿದನು.</verse>
				<verse number="10">ಇಸ್ರಯೇಲರ ಅರಸನೂ ಯೆಹೂದ್ಯರ ಅರಸ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರಿಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡರು. ಎಲ್ಲ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತಾಡತೊಡಗಿದರು.</verse>
				<verse number="11">ಅವರಲ್ಲಿ ಕೆನಾನನ ಮಗ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀವು ಸಿರಿಯಾದವರನ್ನು ಇರಿದು ಕೊಂದುಹಾಕುವಿರಿ,” ಎಂದನು.</verse>
				<verse number="12">ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್ ಗಿಲ್ಯಾದಿಗೆ ಹೋಗಿ; ನೀವು ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಅದನ್ನು ಅರಸರ ಕೈಗೆ ಒಪ್ಪಿಸುವರು,” ಎಂದರು.</verse>
				<verse number="13">ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು, “ನೋಡಿ, ಎಲ್ಲಾ ಪ್ರವಾದಿಗಳು ಏಕಮನಸ್ಸಿನಿಂದ ಅರಸರಿಗೆ ಶುಭವನ್ನೇ ಮುಂದೆ ತಿಳಿಸುತ್ತಾರೆ; ದಯವಿಟ್ಟು ನೀವೂ ಅವರಂತೆ ಶುಭವನ್ನೇ ಮುಂತಿಳಿಸಿ,” ಎಂದು ಹೇಳಿದನು.</verse>
				<verse number="14">ಅದಕ್ಕೆ ಮೀಕಾಯೆಹುವು, “ಸರ್ವೇಶ್ವರನಾಣೆ, ಸರ್ವೇಶ್ವರ ಹೇಳುವುದನ್ನೇ ನುಡಿಯುತ್ತೇನೆ,” ಎಂದು ಉತ್ತರಕೊಟ್ಟನು.</verse>
				<verse number="15">ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ, ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬಾರದೋ?” ಎಂದು ಕೇಳಿದನು. ಅವನು, “ಹೋಗಬಹುದು, ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಪಟ್ಟಣವನ್ನು ಅರಸರ ಕೈಗೆ ಒಪ್ಪಿಸುವರು,” ಎಂದು ಹೇಳೀದನು.</verse>
				<verse number="16">ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಸರ್ವೇಶ್ವರನ ಹೆಸರಿನಲ್ಲಿ ನಿನ್ನಿಂದ ಎಷ್ಟುಸಾರಿ ಪ್ರಮಾಣಮಾಡಿಸಬೇಕು?” ಎಂದನು.</verse>
				<verse number="17">ಆಗ ಅವನು, “ಇಸ್ರಯೇಲರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆ; ಆಗ ಸರ್ವೇಶ್ವರ, ‘ಇವರು ಒಡೆಯನಿಲ್ಲದವರಾಗಿರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ,’ ಎಂದರು” ಎಂಬುದಾಗಿ ಉತ್ತರಕೊಟ್ಟನು.</verse>
				<verse number="18">ಆಗ ಇಸ್ರಯೇಲರ ಅರಸನು ಯೆಹೋಷಾಫಾಟನಿಗೆ, “ಇವನು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೇ?” ಎಂದನು.</verse>
				<verse number="19">ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳು; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.</verse>
				<verse number="20">ಸರ್ವೇಶ್ವರ ತಮ್ಮ ಹತ್ತಿರ ನಿಂತವರನ್ನು, “ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಯಾರು ಪ್ರೇರಿಸುವಿರಿ?” ಎಂದು ಕೇಳಿದಾಗ ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು.</verse>
				<verse number="21">ಕಡೆಗೆ ಒಂದು ಆತ್ಮವು ಸರ್ವೇಶ್ವರನ ಮುಂದೆ ಬಂದು ನಿಂತು, ‘ನಾನು ಹೋಗಿ ಅವನನ್ನು ಪ್ರೇರಿಸುವೆನು,’ ಎಂದಿತು.</verse>
				<verse number="22">‘ಹೇಗೆ ಪ್ರೇರಿಸುವೆ?’ ಎಂದು ಸರ್ವೇಶ್ವರ ಕೇಳಿದರು. ಅದು, ‘ನಾನು ಅಸತ್ಯವಾಡುವ ಆತ್ಮವಾಗಿ ಅವನ ಎಲ್ಲ ಪ್ರವಾದಿಗಳಲ್ಲಿ ಸೇರುವೆನು,’ ಎಂದು ಉತ್ತರಕೊಟ್ಟಿತು. ಆಗ ಸರ್ವೇಶ್ವರ, ‘ಹೋಗಿ ಅದರ ಅಂತೆಯೇ ಮಾಡು; ಅವನನ್ನು ಪ್ರೇರಿಸಿ ಸಫಲನಾಗುವೆ,’ ಎಂದರು.</verse>
				<verse number="23">ನೋಡು, ಸರ್ವೇಶ್ವರ ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾರೆ,” ಎಂದು ಹೇಳಿದನು.</verse>
				<verse number="24">ಆಗ ಕೆನಾನನ ಮಗ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಬಂದು ಅವನ ಕೆನ್ನೆಗೆ ಒಂದು ಪೆಟ್ಟುಕೊಟ್ಟು, “ಸರ್ವೇಶ್ವರನ ಆತ್ಮ ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವುದಕ್ಕೆ ಯಾವ ಮಾರ್ಗವಾಗಿ ಬಂದಿತು?” ಎಂದನು.</verse>
				<verse number="25">ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು,” ಎಂದು ಉತ್ತರಕೊಟ್ಟನು.</verse>
				<verse number="26">ಆಗ ಇಸ್ರಯೇಲರ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ;</verse>
				<verse number="27">ಅವರಿಗೆ, ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕರಗಿಸಬೇಕು,’ ಎಂದು ಆಜ್ಞಾಪಿಸಿದನು.</verse>
				<verse number="28">ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತನಾಗಿ ಬರುವುದಾದರೆ ನಾನು ನುಡಿದದ್ದು ಸರ್ವೇಶ್ವರನ ಮಾತಲ್ಲವೆಂದು ತಿಳಿದುಕೋ,” ಎಂದು ಹೇಳಿ, “ಮಹಾಜನರೇ, ನನ್ನ ಮಾತನ್ನು ಗಮನದಲ್ಲಿಡಿ,” ಎಂದು ಕೂಗಿದನು.</verse>
				<verse number="29">ಇಸ್ರಯೇಲರ ಅರಸನು ಹಾಗು ಯೆಹೂದ್ಯರ ಅರಸ ಯೆಹೋಷಾಫಾಟನು ರಾಮೋತ್ ಗಿಲ್ಯಾದಿಗೆ ವಿರುದ್ಧ ಯುದ್ಧಕ್ಕೆ ಹೊರಟರು.</verse>
				<verse number="30">ಇಸ್ರಯೇಲರ ಅರಸನು ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುತ್ತೇನೆ; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ;” ಎಂದು ಹೇಳಿ ವೇಷಹಾಕಿಕೊಂಡು ರಣರಂಗಕ್ಕೆ ಹೋದನು.</verse>
				<verse number="31">ಸಿರಿಯಾದವರ ಅರಸನು ತನ್ನ ರಥಬಲದ ಮೂವತ್ತೆರಡು ಮಂದಿ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಯೇಲರ ಅರಸನಿಗೇ ಗುರಿ ಇಡಿ,” ಎಂದು ಆಜ್ಞಾಪಿಸಿದ್ದನು.</verse>
				<verse number="32">ಅವರು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಯೇಲರ ಅರಸನೆಂದು ನೆನಸಿ, ಅವನಿಗೆ ವಿರುದ್ಧ ಯುದ್ಧಮಾಡಲು ಬಂದರು.</verse>
				<verse number="33">ಅವನು ಕೂಗಿಕೊಂಡನು. ಆಗ ಇವನು ಇಸ್ರಯೇಲರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾಯಿತು. ಅವರು ಅವನನ್ನು ಬಿಟ್ಟು ಹಿಂದಿರುಗಿದರು.</verse>
				<verse number="34">ಸಿರಿಯಾದವರ ಸೈನಿಕನೊಬ್ಬನು ಯಾರಿಗೂ ಗುರಿಯಿಡದೆ ಬಾಣವನ್ನೆಸೆದನು. ಆ ಬಾಣ ಇಸ್ರಯೇಲರ ಅರಸನಿಗೆ, ಅವನ ಕವಚದ ಸಂದಿನಲ್ಲಿ ಬಂದು ತಾಕಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ,” ಎಂದು ಹೇಳಿದನು.</verse>
				<verse number="35">ಆ ದಿವಸ ಯುದ್ಧ ಬಹುಘೋರವಾಗಿತ್ತು. ಆದ್ದರಿಂದ ಅರಸನು ಸಿರಿಯಾದವರ ಎದುರಿಗೆ ತನ್ನ ರಥದಲ್ಲೇ ಆತುಕೊಂಡು ನಿಲ್ಲಬೇಕಾಯಿತು. ಸಾಯಂಕಾಲವಾದಾಗ ಅವನು ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತ್ತು.</verse>
				<verse number="36">ಸೂರ್ಯಾಸ್ತಮವಾದ ಕೂಡಲೆ, “ಪ್ರತಿಯೊಬ್ಬನು ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ,” ಎಂಬ ಕೂಗು ಇಸ್ರಯೇಲರ ಸೈನ್ಯದಲ್ಲಿ ಹಬ್ಬಿಕೊಂಡಿತು.</verse>
				<verse number="37">ಅರಸನ ಶವವನ್ನು ಸಮಾರಿಯಕ್ಕೆ ತಂದು ಅಲ್ಲಿ ಸಮಾಧಿಮಾಡಿದರು.</verse>
				<verse number="38">ವೇಶ್ಯೆಯರು ಸ್ನಾನಮಾಡುವ ಸಮಾರಿಯದ ಕೆರೆಯಲ್ಲಿ ಅವನ ರಥವನ್ನು ತೊಳೆಯುತ್ತಿದ್ದಾಗ, ನಾಯಿಗಳು ಬಂದು ಅದರಲ್ಲಿದ್ದ ರಕ್ತವನ್ನು ನೆಕ್ಕಿದವು, ಹೀಗೆ ಸರ್ವೇಶ್ವರ ಹೇಳಿದ ಮಾತು ನೆರವೇರಿತು.</verse>
				<verse number="39">ಅಹಾಬನ ಉಳಿದ ಚರಿತ್ರೆ, ಅವನು ಕಟ್ಟಿಸಿದ ದಂತಮಂದಿರ, ಪಟ್ಟಣಗಳು, ಇವುಗಳ ವಿವರ, ಹಾಗು ಅವನ ಬೇರೆ ಕಾರ್ಯಸಾಧನೆಗಳು ಇಸ್ರಯೇಲರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.</verse>
				<verse number="40">ಅಹಾಬನು ಸತ್ತು ಪಿತೃಗಳ ಬಳಿಗೆ ಸೇರಿದನು. ಅವನಿಗೆ ಬದಲಾಗಿ ಅವನ ಮಗ ಅಹಜ್ಯ ಎಂಬವನು ಅರಸನಾದನು.</verse>
				<verse number="41">ಇಸ್ರಯೇಲರ ಅರಸ ಅಹಾಬನ ನಾಲ್ಕನೆಯ ವರ್ಷದಲ್ಲಿ ಆಸನ ಮಗ ಯೆಹೋಷಾಫಾಟನು ಯೆಹೂದ್ಯರ ಅರಸನಾದನು.</verse>
				<verse number="42">ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿ ಇದ್ದನು. ಜೆರುಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬ ಆಕೆ ಇವನ ತಾಯಿ.</verse>
				<verse number="43">ತನ್ನ ತಂದೆ ಆಸನ ಮಾರ್ಗದಲ್ಲಿ ಇವನು ತಪ್ಪದೆ ನಡೆಯುತ್ತಾ, ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಇದ್ದನು. ಆದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಬಲಿಕೊಡುತ್ತಾ, ಧೂಪಾರತಿ ಎತ್ತುತ್ತಾ ಇದ್ದರು.</verse>
				<verse number="44">ಇವನು ಇಸ್ರಯೇಲರ ಅರಸನೊಡನೆ ಸಮಾಧಾನದಿಂದಿದ್ದನು.</verse>
				<verse number="45">ಇವನ ಉಳಿದ ಚರಿತ್ರೆ ಹಾಗು ಇವನು ಯುದ್ಧಗಳಲ್ಲಿ ನಡಿಸಿದ ಶೂರಕೃತ್ಯಗಳ ವಿವರ ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.</verse>
				<verse number="46">ಇವನು ತನ್ನ ತಂದೆ ಆಸನ ಕಾಲದಲ್ಲಿ ತಪ್ಪಿಸಿಕೊಂಡ ಹೆಣ್ಣು-ಗಂಡು ವೇಶ್ಯೆಯರನ್ನು ನಾಡಿನಿಂದ ತೆಗೆದುಹಾಕಿದನು.</verse>
				<verse number="47">ಆ ಕಾಲದಲ್ಲಿ ಎದೋಮ್ ದೇಶದಲ್ಲಿ ಅರಸನಿರಲಿಲ್ಲ; ಇವನ ಪ್ರತಿನಿಧಿಯೇ ಅದನ್ನು ಆಳುತ್ತಿದ್ದನು.</verse>
				<verse number="48">ಇದಲ್ಲದೆ, ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷೀಷ್ ಹಡಗುಗಳನ್ನು ಮಾಡಿಸಿದನು.</verse>
				<verse number="49">ಆಗ ಅಹಾಬನ ಮಗ ಅಹಜ್ಯನು, “ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರಪ್ರಯಾಣ ಮಾಡುವುದಕ್ಕೆ ಅಪ್ಪಣೆಯಾಗಲಿ,” ಎಂದು ಬೇಡಿಕೊಂಡನು. ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದುದರಿಂದ ಓಫೀರನ್ನು ಮುಟ್ಟಲಿಲ್ಲ.</verse>
				<verse number="50">ಯೆಹೋಷಾಫಾಟನು ಮೃತನಾಗಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ಅವನ ಪೂರ್ವಜ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಯೆಹೋರಾಮನು ಅರಸನಾದನು.</verse>
				<verse number="51">ಯೆಹೂದ್ಯರ ಅರಸ ಯೆಹೋಷಾಫಾಟನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಅಹಾಬನ ಮಗ ಅಹಜ್ಯ ಎಂಬುವನು ಅರಸನಾಗಿ ಸಮಾರಿಯದಲ್ಲಿ ಎರಡು ವರ್ಷ ಆಳಿದನು.</verse>
				<verse number="52">ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿ ನೆಬಾಟನ ಮಗ ಯಾರೊಬ್ಬಾಮನ ಮತ್ತು ತನ್ನ ತಂದೆತಾಯಿಗಳ ಮಾರ್ಗದಲ್ಲಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.</verse>
				<verse number="53">ತನ್ನ ತಂದೆಯಂತೆ ಬಾಳ್ ದೇವರನ್ನು ಪೂಜಿಸಿ ಇಸ್ರಯೇಲರ ದೇವರಾದ ಸರ್ವೇಶ್ವರನನ್ನು ರೇಗಿಸಿದನು.</verse>
			</chapter>
		</book>
		<book number="12">
			<chapter number="1">
				<verse number="1">ಅಹಾಬನು ಮರಣಹೊಂದಿದ ನಂತರ ಮೋವಾಬ್ಯರು ಇಸ್ರಯೇಲರ ವಿರುದ್ಧ ದಂಗೆ ಎದ್ದರು.</verse>
				<verse number="2">ಅಹಜ್ಯನು ಸಮಾರಿಯದಲ್ಲಿದ್ದ ತನ್ನ ಮೇಲುಪ್ಪರಿಗೆಯ ಕಿಟಕಿಯೊಂದರಿಂದ ಬಿದ್ದು ಅಸ್ವಸ್ಥನಾಗಿದ್ದನು. ಅವನು ತನ್ನ ಸೇವಕರನ್ನು ಕರೆದು, “ನೀವು ಎಕ್ರೋನಿನ ದೇವರಾದ ‘ಬಾಳ್ಜೆಬೂಬ’ನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ಗುಣವಾಗುವೆನೋ ಇಲ್ಲವೋ, ಎಂದು ವಿಚಾರಿಸಿ ಬನ್ನಿ,” ಎಂದು ಹೇಳಿ ಕಳುಹಿಸಿದನು.</verse>
				<verse number="3">ಆದರೆ ಸರ್ವೇಶ್ವರ ಸ್ವಾಮಿಯ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರಿಯದ ಅರಸನ ಆ ಸೇವಕರನ್ನು ಭೇಟಿಯಾಗು. ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ?</verse>
				<verse number="4">ಈ ಕಾರಣ ಅಹಜ್ಯನು ತಾನು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎನ್ನುತ್ತಾರೆ ಸರ್ವೇಶ್ವರ’ ಎಂದು ಹೇಳು,” ಎಂದು ಆಜ್ಞಾಪಿಸಿದರು. ಎಲೀಯನು ಹಾಗೆಯೇ ಮಾಡಿದನು.</verse>
				<verse number="5">ದೂತರು ಅರಸನ ಬಳಿಗೆ ಹಿಂದಿರುಗಿ ಬಂದಾಗ ಅರಸನು, “ನೀವು ಹಿಂದಿರುಗಿದ್ದೇಕೆ?” ಎಂದು ಕೇಳಿದನು.</verse>
				<verse number="6">ಅದಕ್ಕೆ ಅವರು, “ಒಬ್ಬ ವ್ಯಕ್ತಿ ನಮ್ಮನ್ನು ಎದುರುಗೊಂಡು, “ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹಿಂದಿರುಗಿರಿ. ಸರ್ವೇಶ್ವರನ ಹೆಸರಿನಲ್ಲಿ ಅವನಿಗೆ ಹೀಗೆಂದು ಹೇಳಿರಿ: ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವ ಅಗತ್ಯವಾದರೂ ಏನು? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಹೇಳಿರಿ’ ಎಂದು ಆಜ್ಞಾಪಿಸಿದನು,” ಎಂದು ಉತ್ತರಕೊಟ್ಟರು.</verse>
				<verse number="7">ಅದಕ್ಕೆ ಅರಸನು, “ನಿಮ್ಮನ್ನು ಭೇಟಿಯಾಗಿ ಹೀಗೆಂದು ನುಡಿದ ಆ ವ್ಯಕ್ತಿ ಹೇಗಿದ್ದನು?” ಎಂದು ವಿಚಾರಿಸಿದನು.</verse>
				<verse number="8">ಅವರು, “ಅವನು ಕಂಬಳಿಯನ್ನು ಹೊದ್ದುಕೊಂಡಿದ್ದ; ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು,” ಎಂದರು. ಆಗ ಅರಸನು, “ಆ ವ್ಯಕ್ತಿ ತಿಷ್ಬೀಯನಾದ ಎಲೀಯನೇ ಆಗಿರಬೇಕು,” ಎಂದುಕೊಂಡನು.</verse>
				<verse number="9">ಬಳಿಕ ಅರಸನು ಎಲೀಯನನ್ನು ಕರೆದುತರುವುದಕ್ಕಾಗಿ ಒಬ್ಬ ಪಂಚಾಶದಧಿಪತಿಯನ್ನು ಅವನ ಐವತ್ತುಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡನು. “ದೈವಪುರುಷರೇ, ಇಳಿದು ಬನ್ನಿ, ಅರಸರು ತಮ್ಮನ್ನು ಕರೆಯುತ್ತಿದ್ದಾರೆ,” ಎಂದು ಆಮಂತ್ರಿಸಿದನು.</verse>
				<verse number="10">ಅದಕ್ಕೆ ಎಲೀಯನು, “ನಾನು ದೈವಪುರುಷನಾಗಿ ಇರುವುದು ನಿಜವಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತುಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ,” ಎಂದನು. ಕೂಡಲೆ ಆಕಾಶದಿಂದ ಬೆಂಕಿಬಿದ್ದು ಅವನನ್ನೂ ಅವನ ಐವತ್ತುಮಂದಿ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.</verse>
				<verse number="11">ಆಮೇಲೆ ಅರಸನು ಇನ್ನೊಬ್ಬ ಪಂಶಾಶದಧಿಪತಿಯನ್ನು ಅವನ ಐವತ್ತುಮಂದಿ ಸಿಪಾಯಿಗಳ ಸಮೇತ ಕಳುಹಿಸಿದನು. ಇವನು ಬಂದು ಎಲೀಯನಿಗೆ, “ದೈವಪುರುಷರೇ, ಬೇಗನೆ ಇಳಿದು ಬನ್ನಿ; ಅರಸರು ನಿಮ್ಮನ್ನು ಕರೆಯುತ್ತಾರೆ,” ಎಂದು ಹೇಳಿದನು.</verse>
				<verse number="12">ಅದಕ್ಕೆ ಎಲೀಯನು, “ನಾನು ದೈವಪುರುಷ ಹೌದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತುಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ,” ಎಂದನು. ಕೂಡಲೆ ದೇವರು ಆಕಾಶದಿಂದ ಕಳುಹಿಸಿದ ಬೆಂಕಿ ಬಂದು ಅವನನ್ನೂ ಅವನ ಐವತ್ತುಮಂದಿ ಸಿಪಾಯಿಗಳನ್ನೂ ಸುಟ್ಟುಬಿಟ್ಟಿತು.</verse>
				<verse number="13">ಅರಸನು ಮತ್ತೊಬ್ಬ ಪಚಾಶದಧಿಪತಿಯನ್ನು ಅವನ ಐವತ್ತುಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು, ಎಲೀಯನ ಮುಂದೆ ಮೊಣಕಾಲೂರಿ, “ದೈವಪುರುಷರೇ, ನನ್ನ ಮತ್ತು ನನ್ನ ಸೇವಕರಾದ ಈ ಐವತ್ತುಮಂದಿಯ ಪ್ರಾಣ ನಿಮ್ಮ ದೃಷ್ಟಿಯಲ್ಲಿ ಮೌಲ್ಯವುಳ್ಳದ್ದಾಗಿರಲಿ;</verse>
				<verse number="14">ಆಕಾಶದಿಂದ ಬೆಂಕಿಬಿದ್ದು ನನಗೆ ಮುಂದೆ ಬಂದ ಆ ಇಬ್ಬರು ಪಂಚಾಶದಧಿಪತಿಗಳನ್ನೂ ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲವೆ? ನನ್ನ ಪ್ರಾಣವಾದರೂ ನಿಮ್ಮ ದೃಷ್ಟಿಯಲ್ಲಿ ಮೌಲ್ಯವುಳ್ಳದೆಂದು ಮಾನ್ಯವಾಗಲಿ,” ಎಂದು ಬೇಡಿಕೊಂಡನು.</verse>
				<verse number="15">ಆಗ ಸರ್ವೇಶ್ವರನ ದೂತನು ಎಲೀಯನಿಗೆ, “ನೀನು ಇವನ ಸಂಗಡ ಹೋಗು; ಹೆದರಬೇಡ,” ಎಂದು ಹೇಳಿದನು. ಆದ್ದರಿಂದ ಎಲೀಯನು ಎದ್ದು ಇವನ ಜೊತೆಯಲ್ಲೇ ಅರಸನ ಬಳಿಗೆ ಹೋದನು.</verse>
				<verse number="16">ಅರಸನಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇಕೆ? ಇಸ್ರಯೇಲರಲ್ಲಿ ದೇವರಿಲ್ಲವೆ? ಹೀಗೆ ಮಾಡಿದ್ದರಿಂದ ನೀವು ಹಿಡಿದ ಹಾಸಿಗೆಯಿಂದ ಏಳದೆ ಸಾಯಲೇಬೇಕು ಎಂಬುದಾಗಿ ಸರ್ವೇಶ್ವರ ಹೇಳಿದ್ದಾರೆ,” ಎಂದನು.</verse>
				<verse number="17">ಸರ್ವೇಶ್ವರ ಎಲೀಯನ ಮುಖಾಂತರ ಮುಂತಿಳಿಸಿದಂತೆಯೇ ಅರಸನು ಸತ್ತುಹೋದನು. ಅವನಿಗೆ ಮಕ್ಕಳಿರಲಿಲ್ಲ. ಅವನ ಸ್ಥಾನದಲ್ಲಿ ಅವನ ತಮ್ಮ ಯೋರಾಮನು, ಯೆಹೂದ್ಯರ ಅರಸ ಯೆಹೋಷಾಫಾಟನ ಮಗ ಯೆಹೋರಾಮನ ಅಳ್ವಿಕೆಯ ಎರಡನೆಯ ವರ್ಷದಲ್ಲಿ, ಅರಸನಾದನು.</verse>
				<verse number="18">ಅಹಜ್ಯನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳು ಇಸ್ರಯೇಲ್ ಅರಸುಗಳ ಇತಿಹಾಸ ಗ್ರಂಥದಲ್ಲಿ ಲಿಖಿತವಾಗಿವೆ.</verse>
			</chapter>
			<chapter number="2">
				<verse number="1">ಸರ್ವೇಶ್ವರಸ್ವಾಮಿ ಎಲೀಯನನ್ನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಸೇರಿಸುವ ಸಮಯ ಬಂದಿತು. ಆಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.</verse>
				<verse number="2">ದಾರಿಯಲ್ಲಿ ಎಲೀಯನು ಎಲೀಷನಿಗೆ, “ದಯವಿಟ್ಟು ನೀನು ಇಲ್ಲೇ ಇರು; ಸರ್ವೇಶ್ವರ ನನಗೆ ಬೇತೇಲಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾರೆ,” ಎಂದನು. ಎಲೀಷನು, “ಸರ್ವೇಶ್ವರನ ಆಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರಲಾರೆ,” ಎಂದು ಉತ್ತರಕೊಟ್ಟನು. ಬಳಿಕ ಅವರಿಬ್ಬರೂ ಬೇತೇಲಿಗೆ ಹೋದರು.</verse>
				<verse number="3">ಬೇತೇಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾದರು. “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರೆಂಬುದು ನಿಮಗೆ ಗೊತ್ತೇ?” ಎಂದು ಕೇಳಿದರು. ಅದಕ್ಕೆ ಎಲೀಷನು, “ನನಗೆ ಗೊತ್ತಿದೆ; ಆದರೆ ನೀವು ಸುಮ್ಮನಿರಿ,” ಎಂದನು.</verse>
				<verse number="4">ಎಲೀಯನು ಎಲೀಷನಿಗೆ, “ದಯವಿಟ್ಟು ಇಲ್ಲೇ ಇರು; ಸರ್ವೇಶ್ವರ ನನಗೆ ಜೆರಿಕೋವಿಗೆ ಹೋಗಬೇಕೆಂದು ಆಜ್ಞಾಪಿಸಿದ್ದಾರೆ,” ಎಂದು ಹೇಳಿದನು. ಆದರೆ ಎಲೀಷನು, “ಸರ್ವೇಶ್ವರನಾಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರುವುದಿಲ್ಲ,” ಎಂದು ಉತ್ತರಕೊಟ್ಟು ಅವನ ಜೊತೆಯಲ್ಲೇ ಜೆರಿಕೋವಿಗೆ ಹೋದನು.</verse>
				<verse number="5">ಅಲ್ಲಿನ ಪ್ರವಾದಿಮಂಡಲಿಯವರು ಎಲೀಷನನ್ನು ಭೇಟಿಯಾಗಿ, “ಸರ್ವೇಶ್ವರ ಈ ದಿನ ನಿಮ್ಮ ಗುರುವನ್ನು ನಿಮ್ಮ ಬಳಿಯಿಂದ ಮೇಲಕ್ಕೆ ತೆಗೆದುಕೊಳ್ಳುವರು ಎಂಬುದು ನಿಮಗೆ ತಿಳಿದಿದೆಯೊ?” ಎಂದು ಕೇಳಿದರು. ಅದಕ್ಕೆ ಅವನು, “ತಿಳಿದಿದೆ; ಆದರೆ ನೀವು ಸುಮ್ಮನಿರಿ,” ಎಂದು ಉತ್ತರಿಸಿದನು.</verse>
				<verse number="6">ಎಲೀಯನು ಮತ್ತೆ ಎಲೀಷನಿಗೆ, “ದಯವಿಟ್ಟು ನೀನು ಇಲ್ಲೆಯಿರು; ಸರ್ವೇಶ್ವರ ನನಗೆ ಜೋರ್ಡನಿಗೆ ಹೋಗಬೇಕೆಂದು ಆಜ್ಞಾಪಿಸಿ ಇದ್ದಾರೆ,” ಎಂದನು. ಆಗ ಅವನು, “ಸರ್ವೇಶ್ವರನ ಆಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟಿರಲಾಗದು,” ಎಂದು ಉತ್ತರಕೊಟ್ಟನು. ಆದುದರಿಂದ ಇಬ್ಬರೂ ಹೊರಟು ಜೋರ್ಡನ್ ನದಿಯ ದಡಕ್ಕೆ ಬಂದರು.</verse>
				<verse number="7">ಪ್ರವಾದಿಮಂಡಲಿಯವರಲ್ಲಿ ಐವತ್ತುಮಂದಿ ಇವರ ಹಿಂದಿನಿಂದಲೇ ಬಂದು ಸ್ವಲ್ಪ ದೂರದಲ್ಲಿ ನಿಂತುಕೊಂಡರು.</verse>
				<verse number="8">ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಿಚಿ, ಅದರಿಂದ ನೀರನ್ನು ಹೊಡೆದನು. ನೀರು ಇಬ್ಭಾಗವಾಯಿತು; ಅವರಿಬ್ಬರೂ ಒಣ ನೆಲದ ಮೇಲೆ ದಾಟಿಹೋದರು.</verse>
				<verse number="9">ಅವರು ಆಚೆ ದಡಕ್ಕೆ ಸೇರಿದ ಮೇಲೆ ಎಲೀಯನು ಎಲೀಷನನ್ನು, “ನಿನ್ನನ್ನು ಬಿಟ್ಟುಹೋಗುವ ಮೊದಲು ನಾನು ನಿನಗೋಸ್ಕರ ಏನು ಮಾಡಬೇಕನ್ನುತ್ತಿ ಹೇಳು?” ಎಂದು ಕೇಳಿದನು. ಅದಕ್ಕೆ ಎಲೀಷನು, “ನಿಮಗಿರುವ ಆತ್ಮಶಕ್ತಿಯಲ್ಲಿ ನನಗೆ ಎರಡು ಪಾಲನ್ನು ಅನುಗ್ರಹಿಸಿ,” ಎಂದು ಬೇಡಿಕೊಂಡನು.</verse>
				<verse number="10">ಆಗ ಎಲೀಯನು, “ನೀನು ದುರ್ಲಭವಾದದ್ದನ್ನು ಕೇಳಿಕೊಂಡೆ; ಆದರೂ ನನ್ನನ್ನು ನಿನ್ನ ಬಳಿಯಿಂದ ತೆಗೆಯಲಾಗುವಾಗ ನೀನು ನನ್ನನ್ನು ನೋಡುವುದಾದರೆ ಅದು ದೊರಕುವುದು; ಇಲ್ಲವಾದರೆ ದೊರಕುವುದಿಲ್ಲ,” ಎಂದನು.</verse>
				<verse number="11">ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಹೋದನು.</verse>
				<verse number="12">ಎಲೀಷನು ಅದನ್ನು ನೋಡುತ್ತಾ, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಯೇಲರಿಗೆ ರಥರಥಾಶ್ವಗಳಾಗಿದ್ದವರೇ,” ಎಂದು ಕೂಗಿಕೊಂಡನು. ಎಲೀಯನು ತನಗೆ ಕಾಣಿಸದೆ ಹೋದಮೇಲೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದು ಎರಡು ತುಂಡುಮಾಡಿದನು.</verse>
				<verse number="13">ಅನಂತರ ಅವನು ಮೇಲಿನಿಂದ ಬಿದ್ದ ಎಲೀಯನ ಕಂಬಳಿಯನ್ನು ತೆಗೆದುಕೊಂಡು ಜೋರ್ಡನ್ ನದೀತೀರಕ್ಕೆ ಬಂದನು.</verse>
				<verse number="14">“ಎಲೀಯನ ದೇವರಾದ ಸರ್ವೇಶ್ವರನೆಲ್ಲಿ?” ಎಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆದನು. ಅದು ಇಬ್ಭಾಗ ಆಯಿತು. ಅವನು ದಾಟಿಹೋದನು.</verse>
				<verse number="15">ದೂರದಲ್ಲಿ ನಿಂತಿದ್ದ ಜೆರಿಕೋವಿನ ಪ್ರವಾದಿಮಂಡಲಿಯವರು ಇದನ್ನು ಕಂಡು, “ಎಲೀಯನಿಗಿದ್ದ ಆತ್ಮಶಕ್ತಿ ಎಲೀಷನ ಮೇಲೆ ಬಂದು ನೆಲಸಿದೆ,” ಎಂದು ತಿಳಿದುಕೊಂಡರು. ಅವನನ್ನು ಎದುರುಗೊಂಡು ಅವನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು.</verse>
				<verse number="16">ಅನಂತರ ಅವರು ಅವನಿಗೆ, “ನಿಮ್ಮ ಸೇವಕರಾದ ನಮ್ಮಲ್ಲಿ ಐವತ್ತುಮಂದಿ ಬಲಿಷ್ಠ ಜನರಿದ್ದಾರೆ; ನಿಮ್ಮ ಯಜಮಾನರನ್ನು ಹುಡುಕಲು ಹೋಗುವುದಕ್ಕೆ ಅವರಿಗೆ ಅಪ್ಪಣೆಯಾಗಲಿ. ಸರ್ವೇಶ್ವರನ ಆತ್ಮ ಅವರನ್ನು ಎತ್ತಿಕೊಂಡುಹೋಗಿ ಒಂದು ಬೆಟ್ಟದ ಮೇಲಾಗಲಿ, ತಗ್ಗಿನಲ್ಲಾಗಲಿ ಇಟ್ಟಿರಬಹುದು,” ಎಂದು ಹೇಳಿದರು. ಅವನು, “ನೀವು ಕಳುಹಿಸಬೇಡಿ,” ಎಂದನು.</verse>
				<verse number="17">ಆದರೆ ಅವರು ಅವನನ್ನು ಒತ್ತಾಯಪಡಿಸಿದ್ದರಿಂದ ಅವನು ಬೇಸರಗೊಂಡು ಕಳುಹಿಸುವುದಕ್ಕೆ ಅಪ್ಪಣೆಕೊಟ್ಟನು. ಅವರು ಐವತ್ತುಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿದರೂ ಎಲೀಯನನ್ನು ಕಾಣಲಿಲ್ಲ.</verse>
				<verse number="18">ಇನ್ನೂ ಜೆರಿಕೋವಿನಲ್ಲೇ ಇದ್ದ ಎಲೀಷನ ಬಳಿಗೆ ಅವರು ಬಂದರು. ಅವನು, “’ಹೋಗಬೇಡಿ,’ ಎಂದು ನಾನು ಹೇಳಲಿಲ್ಲವೇ?’ ಎಂದನು.</verse>
				<verse number="19">ಜೆರಿಕೋವಿನ ಜನರು ಎಲೀಷ, “ನಮ್ಮ ಒಡೆಯರಾದ ನಿಮಗೆ ಗೊತ್ತಿರುವಂತೆ ಈ ಊರು ಕಟ್ಟಿಸಿರುವ ಸ್ಥಳ ಚೆನ್ನಾಗಿದೆ. ಆದರೆ ನೀರು ಕೆಟ್ಟದ್ದು. ಆದುದರಿಂದ ಗರ್ಭಪಾತ ಹೆಚ್ಚು,” ಎಂದು ಹೇಳಿದರು.</verse>
				<verse number="20">ಆಗ ಎಲೀಷನು, “ಒಂದು ಹೊಸ ಮಡಕೆಯಲ್ಲಿ ಉಪ್ಪು ಹಾಕಿ ಅದನ್ನು ತಂದುಕೊಡಿ,” ಎಂದನು. ಅವರು ತಂದುಕೊಟ್ಟರು.</verse>
				<verse number="21">ಅವನು ಬುಗ್ಗೆಗೆ ಹೋಗಿ ಆ ನೀರಿನಲ್ಲಿ ಉಪ್ಪುಹಾಕಿದನು; “’ಇನ್ನು ಮುಂದೆ ಈ ನೀರಿನಿಂದ ಮರಣವಾಗಲಿ ಗರ್ಭಪಾತವಾಗಲಿ ಸಂಭವಿಸದಂತೆ ಇದರಲ್ಲಿದ್ದ ದೋಷವನ್ನೆಲ್ಲಾ ಪರಿಹರಿಸಿದ್ದೇನೆ,’ ಎಂಬುದಾಗಿ ಸರ್ವೇಶ್ವರ ನುಡಿದಿದ್ದಾರೆ,” ಎಂದನು.</verse>
				<verse number="22">ಕೂಡಲೆ ನೀರಿನಲ್ಲಿದ್ದ ದೋಷವೆಲ್ಲಾ ಪರಿಹಾರವಾಯಿತು. ಎಲೀಷನ ವಾಕ್ಯಬಲದಿಂದ ಅದು ಇಂದಿನವರೆಗೂ ಹಾಗೆಯೇ ಶುದ್ಧವಾಗಿದೆ.</verse>
				<verse number="23">ಎಲೀಷನು ಅಲ್ಲಿಂದ ಬೇತೇಲಿಗೆ ಹೊರಟನು. ಅಲ್ಲಿನ ಗುಡ್ಡವನ್ನು ಹತ್ತುತ್ತಿರುವಾಗ ಆ ಊರಿನ ಹುಡುಗರು ಹೊರಗೆ ಬಂದರು. “ಬೋಳು ತಲೆಯವನೇ, ಏರು; ಬೋಳುತಲೆಯವನೇ ಏರು,” ಎಂದು ಕೂಗಿ ಅವನನ್ನು ಅಣಕಿಸಿದರು.</verse>
				<verse number="24">ಎಲೀಷನು ಅವರ ಕಡೆಗೆ ತಿರುಗಿ, ಸರ್ವೇಶ್ವರನ ಹೆಸರಿನಲ್ಲಿ ಅವರನ್ನು ಶಪಿಸಿದನು. ಕೂಡಲೆ ಕಾಡಿನಿಂದ ಎರಡು ಹೆಣ್ಣುಕರಡಿಗಳು ಬಂದು ಆ ಹುಡುಗರಲ್ಲಿ ನಾಲ್ವತ್ತೆರಡು ಮಂದಿಯನ್ನು ಸೀಳಿಬಿಟ್ಟವು.</verse>
				<verse number="25">ಎಲೀಷನು ಅಲ್ಲಿಂದ ಕಾರ್ಮೆಲ್ ಬೆಟ್ಟಕ್ಕೆ ಹೋಗಿ ಅನಂತರ ಸಮಾರಿಯಕ್ಕೆ ಬಂದನು.</verse>
			</chapter>
			<chapter number="3">
				<verse number="1">ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಹಾಬನ ಮಗನಾದ ಯೋರಾಮನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಹನ್ನೆರಡು ವರ್ಷ ಆಳಿದನು.</verse>
				<verse number="2">ಇವನು ತನ್ನ ತಂದೆ ತಾಯಿಗಳಷ್ಟು ದುಷ್ಟನಾಗಿರಲಿಲ್ಲ. ಆದರೂ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ತನ್ನ ತಂದೆ ಬಾಳ್ ದೇವತೆಯ ಗೌರವಾರ್ಥ ನಿಲ್ಲಿಸಿದ ಕಲ್ಲಿನ ಕಂಬವನ್ನು ತೆಗೆದುಹಾಕಿದನು.</verse>
				<verse number="3">ಆದರೂ ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗವನ್ನು ಬಿಡಲೇ ಇಲ್ಲ.</verse>
				<verse number="4">ಅನೇಕ ಕುರಿಹಿಂಡುಗಳುಳ್ಳವನಾಗಿದ್ದ ಮೋವಾಬ್ಯರ ಅರಸ ಮೇಷನೆಂಬವನು ಇಸ್ರಯೇಲರ ಅರಸನಿಗೆ ಒಂದು ಲಕ್ಷ ಕುರಿಗಳ ಮತ್ತು ಒಂದು ಲಕ್ಷ ಟಗರುಗಳ ಉಣ್ಣೆಯನ್ನು ಕಪ್ಪವಾಗಿ ಕೊಡುತ್ತಿದ್ದನು.</verse>
				<verse number="5">ಆದರೆ ಅಹಾಬನು ಮರಣ ಹೊಂದಿದ ನಂತರ ಇವನು ಇಸ್ರಯೇಲರ ಅರಸನಿಗೆ ವಿರುದ್ಧ ದಂಗೆಯೆದ್ದನು.</verse>
				<verse number="6">ಆದುದರಿಂದ ಅರಸನಾದ ಯೋರಾಮನು ಒಡನೆ ಇಸ್ರಯೇಲರನ್ನು ಕೂಡಿಸಿಕೊಂಡು ಸಮಾರಿಯದಿಂದ ಹೊರಟನು;</verse>
				<verse number="7">ಯೆಹೂದ್ಯರ ಅರಸನಾದ ಯೆಹೋಷಾಫಾಟನಿಗೆ ದೂತರ ಮುಖಾಂತರ, “ಮೋವಾಬ್ಯರ ಅರಸನು ನನಗೆ ವಿರುದ್ಧ ದಂಗೆ ಎದ್ದಿದ್ದಾನೆ; ಮೋವಾಬರೊಡನೆ ಯುದ್ಧಮಾಡುವುದಕ್ಕೆ ನೀನೂ ನನ್ನ ಜೊತೆಯಲ್ಲಿ ಬರುತ್ತೀಯೋ?” ಎಂದು ಹೇಳಿ ಕಳುಹಿಸಿದನು. ಅದಕ್ಕೆ ಯೆಹೋಷಾಫಾಟನು, “ಬರುತ್ತೇನೆ; ನಾನೂ ನೀನೂ, ನನ್ನ ಜನರೂ ನಿನ್ನ ಜನರೂ ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.</verse>
				<verse number="8">ಅದೂ ಅಲ್ಲದೆ, “ಯಾವ ಮಾರ್ಗವಾಗಿ ಬರಬೇಕು?” ಎಂದು ವಿಚಾರಿಸಿದನು. ಅದಕ್ಕೆ ಯೋರಾಮನು ಎದೋಮ್ಯರ ಅರಣ್ಯಮಾರ್ಗವಾಗಿ ಬರಬೇಕೆಂದನು.</verse>
				<verse number="9">ಆಗ ಇಸ್ರಯೇಲ್, ಜುದೇಯ ಹಾಗು ಎದೋಮ್ ರಾಜ್ಯಗಳ ಅರಸರು ಹೊರಟು ಸುತ್ತಾದ ದಾರಿಯಿಂದ ಏಳು ದಿವಸ ಪ್ರಯಾಣ ಮಾಡಿದರು. ಮಾರ್ಗದಲ್ಲಿ ಅವರ ಸೈನಿಕರಿಗೂ ಅವರು ತಂದಿದ್ದ ಪಶುಗಳಿಗೂ ನೀರು ಸಿಕ್ಕದೆಹೋಯಿತು.</verse>
				<verse number="10">ಆದ್ದರಿಂದ ಇಸ್ರಯೇಲರ ಅರಸನು, “ಅಯ್ಯೋ, ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕಾಗಿ ಸರ್ವೇಶ್ವರ ಇಲ್ಲಿಗೆ ಬರಮಾಡಿದ್ದಾರೆ,” ಎಂದು ಪರಿತಪಿಸಿದನು.</verse>
				<verse number="11">ಆದರೆ ಯೆಹೋಷಾಫಾಟನು, “ಸರ್ವೇಶ್ವರನ ಸನ್ನಿಧಿಯಲ್ಲಿ ನಮ್ಮ ಪರವಾಗಿ ವಿಚಾರಿಸಬಲ್ಲ ಪ್ರವಾದಿ ಇಲ್ಲಿ ಯಾರೂ ಇಲ್ಲವೇ?” ಎಂದು ಕೇಳಿದನು. ಆಗ ಇಸ್ರಯೇಲ್ ಅರಸನ ಸೇವಕರಲ್ಲೊಬ್ಬನು, “ಶಾಫಾಟನ ಮಗನೂ ಎಲೀಯನ ಕೈಗೆ ನೀರು ಕೊಡುತ್ತಿದ್ದವನೂ ಆದ ಎಲೀಷನೆಂಬ ಪ್ರವಾದಿ ಇಲ್ಲಿರುತ್ತಾನೆ,” ಎಂದು ಉತ್ತರಕೊಟ್ಟನು.</verse>
				<verse number="12">ಯೆಹೋಷಾಫಾಟನು, “ಅವನು ಹೇಗೂ ಸರ್ವೇಶ್ವರನ ಉತ್ತರವನ್ನು ತಿಳಿಸುವನು,” ಎಂದದ್ದರಿಂದ ಇಸ್ರಯೇಲ್ ಹಾಗು ಎದೋಮ್ ರಾಜ್ಯಗಳ ಅರಸರು ಯೆಹೋಷಾಫಾಟನೊಡನೆ ಎಲೀಷನ ಬಳಿಗೆ ಬಂದರು.</verse>
				<verse number="13">ಎಲೀಷನು ಇಸ್ರಯೇಲರ ಅರಸನಿಗೆ, “ನನಗೂ ನಿನಗೂ ಏನು ಸಂಬಂಧ? ನಿನ್ನ ತಂದೆತಾಯಿಗಳ ಪ್ರವಾದಿಗಳ ಬಳಿಗೆ ಹೋಗು,” ಎಂದು ಹೇಳಿದನು. ಅದಕ್ಕೆ ಇಸ್ರಯೇಲರ ಅರಸನು, “ಹಾಗೆನ್ನಬೇಡಿ; ಸರ್ವೇಶ್ವರ ಈ ಮೂರು ಮಂದಿ ಅರಸರಾದ ನಮ್ಮನ್ನು ಮೋವಾಬ್ಯರ ಕೈಗೆ ಒಪ್ಪಿಸುವುದಕ್ಕಾಗಿ ಇಲ್ಲಿಗೆ ಬರಮಾಡಿದ್ದಾರೆ ಅಲ್ಲವೇ?’ ಎಂದನು.</verse>
				<verse number="14">ಆಗ ಎಲೀಷನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸರ್ವೇಶ್ವರನಾಣೆ, ಯೆಹೂದ್ಯರ ಅರಸನಾದ ಯೆಹೋಷಾಫಾಟನು ನಿಮ್ಮ ಜೊತೆಯಲ್ಲಿರದಿದ್ದರೆ ನಾನು ನಿಮ್ಮನ್ನು ನೋಡುತ್ತಿರಲಿಲ್ಲ; ಲಕ್ಷಿಸುತ್ತಲೂ ಇರಲಿಲ್ಲ.</verse>
				<verse number="15">ಈಗ ಒಬ್ಬ ವಾದ್ಯಗಾರನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದು ಹೇಳಿದನು. (ವಾದ್ಯಗಳ ಸ್ವರವನ್ನು ಕೇಳುವಾಗಲೆಲ್ಲಾ ಎಲೀಷನಲ್ಲಿ ಸರ್ವೇಶ್ವರನ ಶಕ್ತಿ ಪ್ರಾಪ್ತವಾಗುತ್ತಿತ್ತು).</verse>
				<verse number="16">ಅನಂತರ ಎಲೀಷನು ಇಸ್ರಯೇಲರ ಅರಸನಿಗೆ, “ಈ ಹಳ್ಳದ ತುಂಬಾ ಗುಂಡಿಗಳನ್ನು ಮಾಡಿರಿ;</verse>
				<verse number="17">ಗಾಳಿಮಳೆಗಳು ಕಾಣದಿದ್ದರೂ ಇದು ನೀರಿನಿಂದ ತುಂಬುವುದು. ನೀವೂ ನಿಮ್ಮ ಕುರಿದನಗಳೂ ಎಲ್ಲಾ ಪಶುಪ್ರಾಣಿಗಳೂ ಕುಡಿಯಬಹುದು ಎಂಬುದಾಗಿ ಸರ್ವೇಶ್ವರ ನುಡಿಯುತ್ತಾರೆ.</verse>
				<verse number="18">ಅವರು ತಮ್ಮ ದೃಷ್ಟಿಯಲ್ಲಿ ಅಲ್ಪವಾಗಿರುವ ಈ ಕಾರ್ಯ ಮಾತ್ರವಲ್ಲ, ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವರು.</verse>
				<verse number="19">ನೀವು ಅವರ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ವಿಶೇಷವಾದ ಎಲ್ಲಾ ಊರುಗಳನ್ನೂ ಸ್ವಾಧೀನಮಾಡಿಕೊಳ್ಳುವಿರಿ. ಎಲ್ಲ ಹಣ್ಣಿನ ಮರಗಳನ್ನು ಕಡಿದುಹಾಕಿ, ಬಾವಿಗಳನ್ನು ಮುಚ್ಚಿಬಿಟ್ಟು, ಹೊಲಗಳನ್ನು ಕಲ್ಲು ತುಂಬಿಸಿ ಹಾಳುಮಾಡುವಿರಿ,” ಎಂದು ನುಡಿದನು.</verse>
				<verse number="20">ಪ್ರಾತಃಕಾಲದ ನೈವೇದ್ಯವನ್ನು ಸಮರ್ಪಿಸುವ ಹೊತ್ತಿನಲ್ಲಿ ಫಕ್ಕನೆ ಎದೋಮಿನ ಕಡೆಯಿಂದ ನೀರು ಬಂದು ನಾಡಿನಲ್ಲೆಲ್ಲಾ ತುಂಬಿಕೊಂಡಿತು.</verse>
				<verse number="21">ಅರಸುಗಳು ತಮಗೆ ವಿರುದ್ಧ ಯುದ್ಧಕ್ಕೆ ಬಂದಿದ್ದಾರೆಂಬುದನ್ನು ಮೋವಾಬ್ಯರು ಕೇಳಿದರು. ಆಯುಧಗಳನ್ನು ಧರಿಸಲು ಶಕ್ತರಾದ ಎಲ್ಲ ಯೌವನಸ್ಥರನ್ನೂ ಪ್ರಾಯಸ್ಥರನ್ನೂ ಕೂಡಿಸಿಕೊಂಡು ತಮ್ಮ ದೇಶದ ಗಡಿಗೆ ಬಂದರು.</verse>
				<verse number="22">ಬೆಳಿಗ್ಗೆ ಎದ್ದು ನೋಡುವಾಗ ಎದುರಿಗಿದ್ದ ನೀರು ಇವರ ದೃಷ್ಟಿಗೆ ಬಿದ್ದಿತು. ಸೂರ್ಯಪ್ರಕಾಶದಿಂದ ಆ ನೀರು ರಕ್ತದಂತೆ ಕೆಂಪಾಗಿ ಕಾಣಿಸುತ್ತಿತ್ತು.</verse>
				<verse number="23">ಆದ್ದರಿಂದ, “ಅದು ರಕ್ತ; ಅರಸರು ತಮ್ಮ ತಮ್ಮೊಳಗೆ ಜಗಳವಾಡಿ ಹತರಾಗಿರಬೇಕು; ಮೋವಾಬ್ಯರೇ, ಏಳಿ, ಸುಲಿಗೆಗೆ ಹೋಗೋಣ,” ಎಂದು ಕೂಗಿಕೊಂಡು ಇಸ್ರಯೇಲರ ಪಾಳೆಯಕ್ಕೆ ಹೋದರು.</verse>
				<verse number="24">ಆದರೆ ಇಸ್ರಯೇಲರು ಎದ್ದು ಮೋವಾಬ್ಯರನ್ನು ಸೋಲಿಸಿ ಓಡಿಸಿಬಿಟ್ಟರು. ಇದಲ್ಲದೆ, ಅವರು ಮೋವಾಬ್ಯರನ್ನು ಸಂಹರಿಸುತ್ತಾ, ಅವರ ದೇಶದೊಳಗೆ ನುಗ್ಗಿದರು;</verse>
				<verse number="25">ಎಲ್ಲಾ ಪಟ್ಟಣಗಳನ್ನು ಕೆಡವಿ, ಹೊಲಗಳನ್ನು ಕಲ್ಲುಗಳಿಂದ ತುಂಬಿಸಿ, ಬಾವಿಗಳನ್ನು ಮುಚ್ಚಿ, ಹಣ್ಣಿನ ಮರಗಳನ್ನು ಕಡಿದುಹಾಕಿದರು. ಕೀರ್ಹರೆಷೆತ್ ಎಂಬ ಒಂದೇ ಒಂದು ಮಾರ್ಗ ಉಳಿಯಿತು. ಕವಣೆ ಹೊಡೆಯುವವರು ಅದನ್ನೂ ಸುತ್ತಿಕೊಂಡು ಕಲ್ಲೆಸೆದರು.</verse>
				<verse number="26">ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು ಏಳುನೂರು ಮಂದಿ ಯೋಧರೊಡನೆ ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗಪ್ರಯತ್ನಿಸಿದನು; ಆದರೆ ಆಗದೆ ಹೋಯಿತು.</verse>
				<verse number="27">ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲ ಮಗನನ್ನು ಹಿಡಿದು, ವಧಿಸಿ, ಗೋಡೆಯ ಮೇಲೆ ದಹನಬಲಿ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಯೇಲರ ಮೇಲೆ ಕೋಪೋದ್ರೇಕವುಂಟಾಯಿತು. ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.</verse>
			</chapter>
			<chapter number="4">
				<verse number="1">ಒಂದು ದಿನ ಪ್ರವಾದಿಮಂಡಲಿಯವರಲ್ಲಿ ಒಬ್ಬನ ಹೆಂಡತಿ ಎಲೀಷನನ್ನು ಭೇಟಿಯಾದಳು. ಅವನಿಗೆ, “ನಿಮ್ಮ ಸೇವಕನಾದ ನನ್ನ ಗಂಡ ಮರಣಹೊಂದಿದನು. ಅವನು ಸರ್ವೇಶ್ವರನಲ್ಲಿ ಭಯಭಕ್ತಿ ಉಳ್ಳವನಾಗಿದ್ದನೆಂಬುದು ನಿಮಗೆ ತಿಳಿದ ವಿಷಯ. ಸಾಲಕೊಟ್ಟವನು ನನ್ನ ಇಬ್ಬರು ಮಕ್ಕಳನ್ನು ಗುಲಾಮರನ್ನಾಗಿ ತೆಗೆದುಕೊಂಡು ಹೋಗುವುದಕ್ಕೆ ಬಂದಿದ್ದಾನೆ,” ಎಂದು ಮೊರೆಯಿಟ್ಟಳು.</verse>
				<verse number="2">ಎಲೀಷನು, “ನಾನು ನಿನಗೇನು ಮಾಡಬೇಕೆನ್ನುತ್ತೀ? ನಿನ್ನ ಮನೆಯಲ್ಲಿ ಏನಿದೆ, ಹೇಳು,” ಎಂದನು. ಅದಕ್ಕೆ ಆಕೆ, “ನಿಮ್ಮ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ,” ಎಂದು ಉತ್ತರಕೊಟ್ಟಳು.</verse>
				<verse number="3">ಆಗ ಎಲೀಷನು, “ಹೋಗಿ ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರಿದಾದ ಪಾತ್ರೆಗಳನ್ನು ಕೇಳಿ ತೆಗೆದುಕೊಂಡು ಬಾ.</verse>
				<verse number="4">ಅನಂತರ ನಿನ್ನ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ ಎಣ್ಣೆಯನ್ನು ಆ ಪಾತ್ರೆಗಳಿಗೆ ಹೊಯ್ಯಿ, ತುಂಬಿದ ಆ ಪಾತ್ರೆಗಳನ್ನೆಲ್ಲಾ ಒಂದು ಕಡೆಯಿಡು,” ಎಂದು ಹೇಳಿದನು.</verse>
				<verse number="5">ಆಕೆ ಹೋಗಿ ಮಕ್ಕಳನ್ನು ಒಳಗೆ ಕರೆದುಕೊಂಡು ಬಾಗಿಲನ್ನು ಮುಚ್ಚಿ, ಅವರು ಮುಂದಿಟ್ಟ ಪಾತ್ರೆಗಳಲ್ಲೆಲ್ಲಾ ಎಣ್ಣೆ ಹೊಯ್ದಳು.</verse>
				<verse number="6">ಪಾತ್ರೆಗಳು ತುಂಬಿದಾಗ, ಆಕೆ ತನ್ನ ಮಗನಿಗೆ, “ಇನ್ನೊಂದು ಪಾತ್ರೆಯನ್ನು ತಂದಿಡು,” ಅನ್ನಲು ಅವನು, “ಪಾತ್ರೆಗಳು ತೀರಿಹೋದುವು,” ಎಂದು ಉತ್ತರಕೊಟ್ಟನು. ಕೂಡಲೆ ಎಣ್ಣೆ ಉಕ್ಕುವುದೂ ನಿಂತುಹೋಯಿತು.</verse>
				<verse number="7">ತರುವಾಯ ಆಕೆ ಆ ದೈವಪುರುಷನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ ಆ ಎಣ್ಣೆಯನ್ನು ಮಾರಿ ಸಾಲ ತೀರಿಸು; ಉಳಿದ ಹಣದಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ,” ಎಂದನು.</verse>
				<verse number="8">ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಶ್ರೀಮಂತ ಮಹಿಳೆ ಇದ್ದಳು. ಆಕೆ ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗವಾಗಿ ಹೋಗುವಾಗಲೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.</verse>
				<verse number="9">ಆ ಮಹಿಳೆ ತನ್ನ ಗಂಡನಿಗೆ, “ಯಾವಾಗಲೂ ಈ ದಾರಿಯಿಂದ ಹೋಗುತ್ತಾ ಬರುತ್ತಾ ಇರುವ ಆ ವ್ಯಕ್ತಿ ಒಬ್ಬ ಸಂತನು ಹಾಗು ದೈವಪುರುಷನು ಆಗಿರುತ್ತಾನೆಂದು ನನಗೆ ಗೊತ್ತಾಯಿತು.</verse>
				<verse number="10">ಆದುದರಿಂದ ನಾವು ಅವನಿಗಾಗಿ ಮಾಳಿಗೆಯ ಮೇಲೆ ಒಂದು ಸಣ್ಣ ಕೋಣೆಯನ್ನು ಕಟ್ಟಿಸೋಣ. ಅದರಲ್ಲಿ ಒಂದು ಮಂಚ, ಮೇಜು, ಕುರ್ಚಿ, ದೀಪಸ್ತಂಭ ಇವುಗಳನ್ನು ಇಡೋಣ; ಅವನು ಇಲ್ಲಿಗೆ ಬಂದಾಗೆಲ್ಲಾ ಅದರಲ್ಲಿ ವಾಸಮಾಡಲಿ,” ಎಂದು ಹೇಳಿದಳು.</verse>
				<verse number="11">ಒಂದು ದಿನ ಎಲೀಷನು ಅಲ್ಲಿಗೆ ಬಂದು ಆ ಕೋಣೆಯೊಳಗೆ ಪ್ರವೇಶಿಸಿ ದಣಿವಾರಿಸಿಕೊಂಡನು.</verse>
				<verse number="12">ಅನಂತರ ಆ ಶೂನೇಮ್ಯಳನ್ನು ಕರೆಯಬೇಕೆಂದು ತನ್ನ ಸೇವಕನಾದ ಗೇಹಜಿಗೆ ಆಜ್ಞಾಪಿಸಿದನು. ಅವನು ಹೋಗಿ ಆಕೆಯನ್ನು ಕರೆಯಲು ಆಕೆ ಬಂದು ಮುಂದೆ ನಿಂತಳು.</verse>
				<verse number="13">ಆಗ ಎಲೀಷನು ಗೇಹಜಿಯ ಮುಖಾಂತರ ಆಕೆಯನ್ನು, “ನೀನು ಕಷ್ಟಪಟ್ಟು ನಮಗೆ ಇಷ್ಟೆಲ್ಲಾ ಉಪಕಾರಮಾಡಿದೆ; ನಾನು ನಿನಗೆ ಯಾವ ಪ್ರತ್ಯುಪಕಾರ ಮಾಡಲಿ? ನಿನ್ನ ಪರವಾಗಿ ಅರಸನ ಮುಂದಾಗಲಿ, ಸೇನಾಪತಿಯ ಮುಂದಾಗಲಿ ಮಾತಾಡಬೇಕಾದರೆ ಹೇಳು,” ಎಂದು ಕೇಳಿದನು. ಆಕೆ, “ನಾನು ಸ್ವಕುಲದವರ ಮಧ್ಯೆ ಸುಖವಾಗಿದ್ದೇನೆ,” ಎಂದು ಉತ್ತರಕೊಟ್ಟಳು.</verse>
				<verse number="14">ಆಮೇಲೆ ಎಲೀಷನು ಗೇಹಜಿಯನ್ನು, “ನಾವು ಆಕೆಗೆ ಯಾವ ಉಪಕಾರ ಮಾಡಬಹುದು?” ಎಂದು ಕೇಳಿದನು. ಅವನು, “ಆಕೆಗೆ ಮಗನಿಲ್ಲ, ಗಂಡನು ಮುದುಕನಾಗಿದ್ದಾನೆ,” ಎಂದನು.</verse>
				<verse number="15">ಇದನ್ನು ಕೇಳಿ ಎಲೀಷನು ಆ ಮಹಿಳೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಅವನು ಹೋಗಿ ಕರೆದನು. ಆಕೆ ಬಂದು ಬಾಗಿಲಿನ ಹತ್ತಿರ ನಿಂತಳು.</verse>
				<verse number="16">ಎಲೀಷನು ಆಕೆಗೆ, “ನೀನು ಬರುವ ವರ್ಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಂಡಿರುವೆ,” ಎಂದನು. ಅದಕ್ಕೆ ಆಕೆ, “ದೈವಪುರುಷರೇ, ಒಡೆಯರೇ, ಹೀಗೆ ಹೇಳಿ ನಿಮ್ಮ ದಾಸಿಯನ್ನು ವಂಚಿಸಬೇಡಿ,” ಎಂದು ನುಡಿದಳು.</verse>
				<verse number="17">ಆ ಮಹಿಳೆ ಗರ್ಭಿಣಿಯಾಗಿ, ಎಲೀಷನು ಹೇಳಿದಂತೆ ಮುಂದಿನ ವರ್ಷ, ಅದೇ ಕಾಲದಲ್ಲಿ ಒಬ್ಬ ಮಗನನ್ನು ಹೆತ್ತಳು.</verse>
				<verse number="18">ಹುಡುಗನು ದೊಡ್ಡವನಾದ ಮೇಲೆ, ಒಂದು ದಿನ ಹೊಲದಲ್ಲಿ ಬೆಳೆ ಕೊಯ್ಯುವವರ ಸಂಗಡ ಇದ್ದ ತನ್ನ ತಂದೆಯ ಬಳಿಗೆ ಹೋದನು.</verse>
				<verse number="19">ಅಲ್ಲಿದ್ದಾಗ ಅವನು ಇದ್ದಕ್ಕಿದ್ದ ಹಾಗೆ, “ಅಪ್ಪಾ, ನನ್ನ ತಲೆ ಸಿಡಿಯುತ್ತಿದೆ, ಸಿಡಿಯುತ್ತಿದೆ,” ಎಂದು ಕೂಗಿಕೊಂಡನು. ತಂದೆ ಒಬ್ಬ ಸೇವಕನನ್ನು ಕರೆದು, “ಇವನನ್ನು ತಾಯಿಯ ಹತ್ತಿರ ತೆಗೆದುಕೊಂಡು ಹೋಗು,” ಎಂದು ಆಜ್ಞಾಪಿಸಿದನು.</verse>
				<verse number="20">ಸೇವಕನು ಹುಡುಗನನ್ನು ಅವನ ತಾಯಿಗೆ ತಂದೊಪ್ಪಿಸಿದನು. ಹುಡುಗನು ಮಧ್ಯಾಹ್ನದವರೆಗೂ ತಾಯಿಯ ತೊಡೆಯ ಮೇಲೆಯೇ ಇದ್ದು ಅನಂತರ ಸತ್ತನು.</verse>
				<verse number="21">ಕೂಡಲೆ ಆಕೆ ಅವನನ್ನು ದೈವಪುರುಷನ ಕೋಣೆಗೆ ತೆಗೆದುಕೊಂಡು ಹೋಗಿ, ಅವನ ಮಂಚದ ಮೇಲೆ ಮಲಗಿಸಿ, ಬಾಗಿಲು ಮುಚ್ಚಿ, ಗಂಡನನ್ನು ಕರೆಯಿಸಿದಳು.</verse>
				<verse number="22">“ದಯವಿಟ್ಟು ನನಗಾಗಿ ಒಬ್ಬ ಸೇವಕನನ್ನೂ ಒಂದು ಕತ್ತೆಯನ್ನೂ ಕಳುಹಿಸಿ; ನಾನು ಬೇಗನೆ ಆ ದೈವಪುರುಷನ ಬಳಿಗೆ ಹೋಗಿ ಬರುತ್ತೇನೆ,” ಎಂದು ಕೇಳಿದಳು.</verse>
				<verse number="23">ಅದಕ್ಕೆ ಅವನು, “ಇಂದು ಅಮಾವಾಸ್ಯೆಯೂ ಅಲ್ಲ, ಸಬ್ಬತ್ತೂ ಅಲ್ಲ, ಈ ದಿನ ಹೋಗಿ ಪ್ರಯೋಜನವಿಲ್ಲ,” ಎಂದನು.</verse>
				<verse number="24">ಆಕೆ, “ಚಿಂತೆಯಿಲ್ಲ,” ಎಂದು ಹೇಳಿ ಕತ್ತೆಗೆ ತಡಿಹಾಕಿಸಿ, ಕುಳಿತುಕೊಂಡು ಸೇವಕನಿಗೆ, “ಹೊಡೆ, ಓಡಿಸುತ್ತಾ ಹೋಗು; ನಾನು ಅಪ್ಪಣೆ ಮಾಡುವವರೆಗೂ ನಿಲ್ಲಿಸಬೇಡ,” ಎಂದು ಆಜ್ಞಾಪಿಸಿದಳು.</verse>
				<verse number="25">ಹೀಗೆ ಆಕೆ ಪ್ರಯಾಣ ಮಾಡಿ ಕರ್ಮೆಲ್ ಬೆಟ್ಟದ ಮೇಲಿದ್ದ ದೈವಪುರುಷನ ಬಳಿಗೆ ಬಂದಳು. ಅವನು ಈಕೆಯನ್ನು ದೂರದಿಂದಲೇ ಕಂಡು ತನ್ನ ಸೇವಕನಾದ ಗೇಹಜಿಗೆ,</verse>
				<verse number="26">“ಅಗೋ, ಅಲ್ಲಿ ಶೂನೇಮ್ಯಳು; ನೀನು ಓಡಿಹೋಗಿ ಆಕೆಯನ್ನು ಭೇಟಿಯಾಗು; ‘ನಿನಗೂ ನಿನ್ನ ಗಂಡನಿಗೂ ಮಗನಿಗೂ ಕ್ಷೇಮವೇ?’ ಎಂದು ವಿಚಾರಿಸು,” ಎಂಬುದಾಗಿ ಆಜ್ಞಾಪಿಸಿ ಕಳುಹಿಸಿದನು. ಆಕೆ ಆ ಸೇವಕನಿಗೆ, “ಕ್ಷೇಮ,” ಎಂದು ಉತ್ತರಕೊಟ್ಟು, ಬೆಟ್ಟದ ಮೇಲಿದ್ದ ದೈವಪುರುಷನ ಬಳಿಗೆ ಬಂದು, ಅವನ ಪಾದಗಳನ್ನು ಹಿಡಿದಳು.</verse>
				<verse number="27">ಗೇಹಜಿಯು ಆಕೆಯನ್ನು ದೂಡುವುದಕ್ಕಾಗಿ ಹತ್ತಿರ ಬಂದನು. ದೈವಪುರುಷನು, “ಬಿಡು, ತಡೆಯಬೇಡ; ಆಕೆಗೆ ಮನಸ್ಸಿನಲ್ಲಿ ತೀವ್ರ ದುಃಖವಿರುವ ಹಾಗೆ ತೋರುತ್ತದೆ. ಸರ್ವೇಶ್ವರ ಆಕೆಯ ದುಃಖವನ್ನು ನನಗೆ ತಿಳಿಸಲಿಲ್ಲ; ಮರೆಮಾಡಿದ್ದಾರೆ,” ಎಂದು ಹೇಳಿದನು.</verse>
				<verse number="28">ಆಕೆ ದೈವಪುರುಷನಿಗೆ, “ನನಗೆ ಒಬ್ಬ ಮಗ ಬೇಕೆಂದು ಒಡೆಯರಾದ ನಿಮ್ಮನ್ನು ನಾನು ಬೇಡಿಕೊಂಡೆನೆ? ನನ್ನನ್ನು ವಂಚಿಸಬಾರದೆಂದು ಮೊರೆಯಿಟ್ಟೆನಲ್ಲವೆ?” ಎಂದಳು.</verse>
				<verse number="29">ಆಗ ಎಲೀಷನು ಗೇಹಜಿಗೆ, “ನೀನು ಹೋಗಿ, ನಡುಕಟ್ಟಿಕೊಂಡು, ನನ್ನ ಕೋಲನ್ನು ತೆಗೆದುಕೊಂಡು ಹೋಗಿ, ಆ ಹುಡುಗನ ಮುಖದ ಮೇಲಿಡು; ಹೋಗುವಾಗ ದಾರಿಯಲ್ಲಿ ಯಾರನ್ನೂ ವಂದಿಸಬೇಡ; ಯಾವ ವಂದನೆಯನ್ನೂ ಸ್ವೀಕರಿಸಬೇಡ,\ ಎಂದು ಹೇಳಿ ಕಳುಹಿಸಿದನು.</verse>
				<verse number="30">ಆದರೂ ಆ ಹುಡುಗನ ತಾಯಿ, “ಸರ್ವೇಶ್ವರನಾಣೆ, ನಿಮ್ಮ ಜೀವದಾಣೆ, ನಾನು ನಿಮ್ಮನ್ನು ಬಿಟ್ಟುಹೋಗುವುದಿಲ್ಲ,” ಎಂದಳು. ಆದ್ದರಿಂದ ಎಲೀಷನು ಆಕೆಯ ಜೊತೆಯಲ್ಲೇ ಹೊರಟನು.</verse>
				<verse number="31">ಅವರ ಮುಂದಾಗಿ ಹೋದ ಗೇಹಜಿಯು ಕೋಲನ್ನು ಹುಡುಗನ ಮುಖದ ಮೇಲಿಟ್ಟರೂ ಶಬ್ದವಿರಲಿಲ್ಲ, ಜೀವದ ಲಕ್ಷಣವಿರಲಿಲ್ಲ. ಆದುದರಿಂದ ಅವನು ಹಿಂದಿರುಗಿ ಬಂದು ಎಲೀಷನನ್ನು ಎದುರುಗೊಂಡು, “ಹುಡುಗನು ಎಚ್ಚರವಾಗಲಿಲ್ಲ,” ಎಂದನು.</verse>
				<verse number="32">ಎಲೀಷನು ಆ ಮನೆಯನ್ನು ಮುಟ್ಟಿದಾಗ, ಸತ್ತ ಹುಡುಗನನ್ನು ತನ್ನ ಮಂಚದ ಮೇಲೆ ಇಟ್ಟಿರುವುದನ್ನು ಕಂಡನು.</verse>
				<verse number="33">ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಿಲನ್ನು ಮುಚ್ಚಿಕೊಂಡು ಸರ್ವೇಶ್ವರನನ್ನು ಪ್ರಾರ್ಥಿಸಿದನು.</verse>
				<verse number="34">ಅನಂತರ ಹುಡುಗನ ಬಾಯಿ, ಕಣ್ಣು, ಕೈಗಳಿಗೆ ತನ್ನ ಬಾಯಿ, ಕಣ್ಣು, ಕೈಗಳು ಮುಟ್ಟುವಂತೆ ಅವನ ಮೇಲೆ ಬೋರಲು ಬಿದ್ದನು. ಆದ್ದರಿಂದ ಹುಡುಗನ ದೇಹ ಬೆಚ್ಚಗಾಯಿತು.</verse>
				<verse number="35">ಆಮೇಲೆ ಹುಡುಗನನ್ನು ಬಿಟ್ಟು ಎದ್ದು ಮನೆಯನ್ನು ತುಸುಹೊತ್ತು ಅತ್ತಿತ್ತ ಅಡ್ಡಾಡಿ, ತಿರುಗಿ ಅವನ ಮೇಲೆ ಬೋರಲು ಬೀಳಲು, ಹುಡುಗನು ಏಳು ಸಾರಿ ಸೀತು ಕಣ್ತೆರೆದನು.</verse>
				<verse number="36">ಆಗ ಎಲೀಷನು ಗೇಹಜಿಗೆ, “ಶೂನೇಮ್ಯಳನ್ನು ಕರೆ,” ಎಂದು ಆಜ್ಞಾಪಿಸಲು, ಅವನು ಆಕೆಯನ್ನು ಕರೆದನು. ಆಕೆ ಬಂದಾಗ ಎಲೀಷನು, “ನಿನ್ನ ಮಗನನ್ನುತೆಗೆದುಕೋ,” ಎಂದು ಹೇಳಿದನು.</verse>
				<verse number="37">ಆಕೆ ಹತ್ತಿರ ಬಂದು ಅವನ ಪಾದಗಳಿಗೆ ಬಿದ್ದು, ಸಾಷ್ಟಾಂಗ ನಮಸ್ಕಾರ ಮಾಡಿ, ಮಗನನ್ನು ತೆಗೆದುಕೊಂಡು ಹೋದಳು.</verse>
				<verse number="38">ಎಲೀಷನು ಪುನಃ ಗಿಲ್ಗಾಲಿಗೆ ಹೋದನು. ಆಗ ನಾಡಿನಲ್ಲಿ ಬರವಿತ್ತು. ಪ್ರವಾದಿಮಂಡಲಿಯವರು ತನ್ನ ಮುಂದೆ ಕೂಡಿಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಹಂಡೆಯನ್ನು ತೆಗೆದುಕೊಂಡು ಇವರಿಗೆ ಅಡಿಗೆಮಾಡು,” ಎಂದು ಆಜ್ಞಾಪಿಸಿದನು.</verse>
				<verse number="39">ಅವರಲ್ಲಿ ಒಬ್ಬನು ಯಾವುದಾದರೊಂದು ತರಕಾರಿ ಸಿಕ್ಕೀತೆಂದು ಕಾಡಿಗೆ ಹೋಗಿ, ಅಲ್ಲಿ ಒಂದು ಕಾಡುಬಳ್ಳಿಯನ್ನು ಕಂಡು, ಉಡಿತುಂಬಾ ಅದರ ಕಾಯಿಗಳನ್ನು ಕಿತ್ತುಕೊಂಡುಬಂದು, ತುಂಡು ತುಂಡುಮಾಡಿ ಆ ಪಾತ್ರೆಯೊಳಗೆ ಹಾಕಿದನು. ಅದು ಎಂಥ ಕಾಯಿಯೆಂಬುದು ಯಾರಿಗೂ ಗೊತ್ತಿರಲಿಲ್ಲ.</verse>
				<verse number="40">ಜನರಿಗೆ ಅದನ್ನೇ ಊಟಕ್ಕೆ ಬಡಿಸಿದರು; ಅವರು ಅದನ್ನು ಬಾಯೊಳಗೆ ಹಾಕಿದ ಕೂಡಲೆ ತಿನ್ನಲಾರದೆ, “ದೈವಪುರುಷನೇ, ಪಾತ್ರೆಯಲ್ಲಿ ವಿಷ!” ಎಂದು ಕೂಗಿದರು.</verse>
				<verse number="41">ಆಗ ಅವನು, “ಹಿಟ್ಟನ್ನು ತಂದುಕೊಡಿ,” ಎಂದು ಹೇಳಿದನು; ಅವರು ತರಲು ಅದನ್ನು ಆ ಪಾತ್ರೆಯೊಳಗೆ ಹಾಕಿ, “ಈಗ ಇದನ್ನು ಬಡಿಸಬಹುದು,” ಎಂದನು. ಕೂಡಲೆ ಪಾತ್ರೆಯಲ್ಲಿದ್ದ ವಿಷವೆಲ್ಲಾ ಹೋಗಿತ್ತು.</verse>
				<verse number="42">ಒಂದು ದಿನ ಬಾಳ್‍ಷಾಲಿಷಾ ಊರಿನ ಒಬ್ಬ ವ್ಯಕ್ತಿ, ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ ಒಂದು ಚೀಲ ತುಂಬಾ ಹಸೀ ತೆನೆಗಳನ್ನೂ ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೈವಪುರುಷನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು; ಅವರು ಊಟಮಾಡಲಿ,” ಎಂದು ಹೇಳಿದನು.</verse>
				<verse number="43">ಅದಕ್ಕೆ ಅವನು, “ಇಷ್ಟನ್ನು ನೂರುಮಂದಿಗೆ ಹೇಗೆ ಬಡಿಸಲಿ,” ಎಂದನು. ಎಲೀಷನು, “ಇರಲಿ, ಕೊಡು; ಅವರು ಊಟಮಾಡಲಿ. ‘ಅವರು ಅದನ್ನು ಊಟಮಾಡಿ ತೃಪ್ತರಾಗಿ ಇನ್ನೂ ಉಳಿಸಿಕೊಳ್ಳುವರು’ ಎಂಬುದು ಸರ್ವೇಶ್ವರನ ನುಡಿ,” ಎಂದು ಹೇಳಿದನು.</verse>
				<verse number="44">ಸೇವಕನು ಬಡಿಸಿದನು. ಸರ್ವೇಶ್ವರನು ನುಡಿದಂತೆಯೇ ಜನರು ಊಟಮಾಡಿ, ತೃಪ್ತರಾಗಿ ಇನ್ನೂ ಉಳಿಸಿಕೊಂಡರು.</verse>
			</chapter>
			<chapter number="5">
				<verse number="1">ಸಿರಿಯಾದ ರಾಜನಿಗೆ ನಾಮಾನ್ ಎಂಬೊಬ್ಬ ಸೇನಾಪತಿಯಿದ್ದನು. ಸರ್ವೇಶ್ವರಸ್ವಾಮಿ ಇವನ ಮುಂಖಾತರ ಸಿರಿಯಾದವರಿಗೆ ಜಯವನ್ನು ಅನುಗ್ರಹಿಸಿದ್ದರು. ಆದ್ದರಿಂದ ರಾಜನು ಇವನನ್ನು ಮಹಾಪುರುಷನೆಂದೂ ಸನ್ಮಾನ್ಯನೆಂದೂ ಗೌರವಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಭೀಕರ ಚರ್ಮರೋಗದಿಂದ ನರಳುತ್ತಿದ್ದನು.</verse>
				<verse number="2">ಸಿರಿಯಾದವರು, ಒಮ್ಮೆ ಸುಲಿಗೆಗಾಗಿ ಇಸ್ರಯೇಲರ ಪ್ರಾಂತ್ಯಕ್ಕೆ ಹೋಗಿಬರುವಾಗ, ಅಲ್ಲಿನ ಒಬ್ಬ ಹುಡುಗಿಯನ್ನು ಹಿಡಿದುಕೊಂಡು ಬಂದರು. ಆಕೆ ನಾಮಾನನ ಹೆಂಡತಿಗೆ ದಾಸಿಯಾದಳು.</verse>
				<verse number="3">ಒಂದು ದಿನ ಆಕೆ ತನ್ನ ಯಜಮಾನಿಗೆ, “ನಮ್ಮ ದಣಿಯವರು ಸಮಾರಿಯದಲ್ಲಿರುವ ಪ್ರವಾದಿಯ ಹತ್ತಿರ ಇದ್ದಿದ್ದರೆ ಎಷ್ಟೋ ಒಳ್ಳೇದಾಗುತ್ತಿತ್ತು; ಅವರು ಇವರನ್ನು ಈ ಚರ್ಮರೋಗದಿಂದ ಗುಣಪಡಿಸುತ್ತಿದ್ದರು,” ಎಂದು ಹೇಳಿದಳು.</verse>
				<verse number="4">ನಾಮಾನನು ರಾಜನ ಸನ್ನಿಧಿಗೆ ಹೋಗಿ, ಇಸ್ರಯೇಲ್ ನಾಡಿನ ಹುಡುಗಿ ಹೇಳಿದ್ದನ್ನು ತಿಳಿಸಿದನು.</verse>
				<verse number="5">ಅವನು, “ನೀನು ಅಲ್ಲಿಗೆ ಹೋಗಿ ಬಾ; ನಾನು ನಿನ್ನ ಕೈಯಲ್ಲಿ ಇಸ್ರಯೇಲರ ಅರಸನಿಗೆ ಒಂದು ಪತ್ರವನ್ನು ಕೊಡುತ್ತೇನೆ,” ಎಂದನು. ನಾಮಾನನು ಮೂವತ್ತು ಸಾವಿರ ಬೆಳ್ಳಿ, ಆರು ಸಾವಿರ ಬಂಗಾರ ನಾಣ್ಯಗಳನ್ನೂ, ಹತ್ತು ದುಸ್ತು ಬಟ್ಟೆಗಳನ್ನೂ ತೆಗೆದುಕೊಂಡು ಸಮಾರಿಯಕ್ಕೆ ಹೋದನು;</verse>
				<verse number="6">ತಂದ ಪತ್ರವನ್ನು ಇಸ್ರಯೇಲರ ಅರಸನಿಗೆ ಕೊಟ್ಟನು. ಅದರಲ್ಲಿ, “ನನ್ನ ಸೇವಕ ನಾಮಾನನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ; ನೀವು ಅವನ ಚರ್ಮರೋಗವನ್ನು ವಾಸಿಮಾಡತಕ್ಕದ್ದೆಂದು ಈ ಪತ್ರದಿಂದ ತಿಳಿದುಕೊಳ್ಳಿ,” ಎಂಬುದಾಗಿ ಬರೆದಿತ್ತು.</verse>
				<verse number="7">ಇಸ್ರಯೇಲರ ಅರಸನು ಈ ಪತ್ರವನ್ನು ಓದಿದ ಕೂಡಲೆ, ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ತನ್ನ ಪರಿವಾರದವರಿಗೆ, “ತಾನು ಕಳುಹಿಸಿದ ವ್ಯಕ್ತಿಯನ್ನು ಚರ್ಮರೋಗದಿಂದ ನಾನು ವಾಸಿಮಾಡಬೇಕಂತೆ! ಇದು ಎಂಥ ಅಪ್ಪಣೆ; ನಾನೇನು ದೇವರೋ? ಜೀವದಾನ ಮಾಡುವುದಕ್ಕಾಗಲಿ ಜೀವಹರಣ ಮಾಡುವುದಕ್ಕಾಗಲಿ ನನಗೆ ಸಾಮರ್ಥ್ಯವುಂಟೇ? ಇವನು ನನ್ನೊಡನೆ ಯುದ್ಧಮಾಡುವುದಕ್ಕೆ ನೆಪ ಹುಡುಕುತ್ತಾನಲ್ಲದೆ ಮತ್ತೇನು? ನೀವೇ ಆಲೋಚಿಸಿ ನೋಡಿ,” ಎಂದು ಹೇಳೀದನು.</verse>
				<verse number="8">ಇಸ್ರಯೇಲರ ಅರಸನು ಸಿಟ್ಟಿನಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದನ್ನು ದೈವಪುರುಷ ಎಲೀಷನು ಕೇಳಿದನು. ದೂತರ ಮುಖಾಂತರ ಅವನಿಗೆ, “ನೀವು ನಿಮ್ಮ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸಿ; ಇಸ್ರಯಲರಲ್ಲಿ ಒಬ್ಬ ಪ್ರವಾದಿ ಇದ್ದಾನೆಂಬುದು ಅವನಿಗೆ ಗೊತ್ತಾಗಲಿ,” ಎಂದು ಹೇಳಿ ಕಳುಹಿಸಿದನು.</verse>
				<verse number="9">ನಾಮಾನನು ರಥರಥಾಶ್ವಗಳೊಡನೆ ಎಲೀಷನ ಮನೆಗೆ ಹೋಗಿ ಬಾಗಿಲಿನ ಮುಂದೆ ನಿಂತನು.</verse>
				<verse number="10">ಎಲೀಷನು ಅವನಿಗೆ, “ಹೋಗಿ ಜೋರ್ಡನ್ ನದಿಯಲ್ಲಿ ಏಳು ಸಾರಿ ಸ್ನಾನಮಾಡು; ಆಗ ನಿನ್ನ ದೇಹ ಮೊದಲಿದ್ದಂತಾಗುವುದು; ನೀನು ಶುದ್ಧನಾಗುವೆ,” ಎಂದು ಹೇಳಿಕಳುಹಿಸಿದನು.</verse>
				<verse number="11">ನಾಮಾನನು ಇದನ್ನು ಕೇಳಿ ಕೋಪಗೊಂಡನು. “ಇದೇನು! ಇವನು ಖಂಡಿತ ವಾಗಿ ಹೊರಗೆಬಂದು ನಿಂತು, ತನ್ನ ದೇವರಾದ ಸರ್ವೇಶ್ವರ ನ ಹೆಸರು ಹೇಳಿ, ನನ್ನ ಚರ್ಮ ದ ಮೇಲೆ ಕೈಯಾಡಿಸಿ, ರೋಗ ವಾಸಿ ಮಾಡುವನೆಂದು ನೆನಸಿದೆ.</verse>
				<verse number="12">ದಮಸ್ಕದ ಅಬಾನಾ ಹಾಗು ಪರ್ಪರ್ ಎಂಬ ನದಿಗಳು ಇಸ್ರಯೇಲರ ಎಲ್ಲಾ ನದಿ ಹೊಳೆಗಳಿಗಿಂತ ಉತ್ತಮವಾಗಿವೆಯಲ್ಲವೇ? ಸ್ನಾನದಿಂದ ವಾಸಿಯಾಗುವ ಹಾಗಿದ್ದರೆ ನಾನು ಅವುಗಳಲ್ಲಿಯೇ ಸ್ನಾನಮಾಡಬಹುದಿತ್ತಲ್ಲವೇ?” ಎಂದು ಹೇಳಿ, ಬಹಳ ಸಿಟ್ಟಿನಿಂದ ಹೊರಟುಹೋದನು.</verse>
				<verse number="13">ಆಗ ಅವನ ಸೇವಕರು ಹತ್ತಿರಬಂದು, “ಯಜಮಾನರೇ, ಪ್ರವಾದಿ ಒಂದು ಕಠಿಣವಾದ ಕೆಲಸವನ್ನು ಹೇಳಿದ್ದರೆ ಅದನ್ನು ಮಾಡುತ್ತಿದ್ದಿರಲ್ಲವೆ? ಹಾಗಾದರೆ ‘ಸ್ನಾನಮಾಡಿ, ಶುದ್ಧರಾಗುವಿರಿ’ ಎಂದು ಹೇಳಿದರೆ ಏಕೆ ಅದರಂತೆ ಮಾಡಬಾರದು?” ಎಂದರು.</verse>
				<verse number="14">ಅವನು ಅಂತೆಯೇ ಜೋರ್ಡನಿಗೆ ಹೋಗಿ, ಏಳು ಸಾರಿ ಅದರಲ್ಲಿ ಮುಳುಗಿ ಎದ್ದನು. ಕೂಡಲೆ ದೈವಪುರುಷನ ಮಾತಿಗನುಸಾರ ಅವನ ದೇಹ ಒಂದು ಮಗುವಿನ ದೇಹದಂತೆ ಶುದ್ಧವಾಯಿತು.</verse>
				<verse number="15">ಅನಂತರ ನಾಮಾನನು ತನ್ನ ಪರಿವಾರದವರೊಡನೆ ಹಿಂದಿರುಗಿ ದೈವಪುರುಷನ ಬಳಿಗೆ ಹೋಗಿ ಅವನ ಮುಂದೆ ನಿಂತನು. “ಇಸ್ರಯೇಲ್ ನಾಡಿನಲ್ಲಿರುವ ದೇವರ ಹೊರತು, ಲೋಕದಲ್ಲಿ ಬೇರೆ ದೇವರು ಇಲ್ಲವೇ ಇಲ್ಲವೆಂಬುದು ಈಗ ನನಗೆ ಗೊತ್ತಾಯಿತು; ತಾವು ದಯವಿಟ್ಟು ಈ ಕಾಣಿಕೆಯನ್ನು ಅಂಗೀಕರಿಸಬೇಕು,” ಎಂದು ಹೇಳಿದನು.</verse>
				<verse number="16">ಅದಕ್ಕೆ ಎಲೀಷನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸರ್ವೇಶ್ವರನಾಣೆ, ನಿನ್ನಿಂದ ಏನೂ ತೆಗೆದುಕೊಳ್ಳುವುದಿಲ್ಲ,” ಎಂದನು. ನಾಮಾನನು ಎಷ್ಟು ಒತ್ತಾಯಪಡಿಸಿದರೂ ಅವನು ತೆಗೆದುಕೊಳ್ಳಲೇ ಇಲ್ಲ.</verse>
				<verse number="17">ಆಗ ಅವನು ಎಲೀಷನಿಗೆ, “ತಾವು ಏನನ್ನೂ ಸ್ವೀಕರಿಸದಿದ್ದರೆ ತಮ್ಮ ಸೇವಕನಾದ ನನಗೆ ಎರಡು ಹೇಸರಕತ್ತೆಗಳು ಹೊರುವಷ್ಟು ಮಣ್ಣನ್ನು ಕೊಡಿಸಬೇಕೆಂದು ಬೇಡಿಕೊಳ್ಳುತ್ತೇನೆ. ನಾನು ಇನ್ನು ಮುಂದೆ ಎಲ್ಲಾ ದೇವತೆಗಳನ್ನು ಬಿಟ್ಟು ಸರ್ವೇಶ್ವರಸ್ವಾಮಿ ಒಬ್ಬರಿಗೇ ದಹನಬಲಿಗಳನ್ನು ಸಮರ್ಪಿಸಬೇಕೆಂದಿರುತ್ತೇನೆ.</verse>
				<verse number="18">ಆದರೆ ಈ ವಿಷಯದಲ್ಲಿ ಸರ್ವೇಶ್ವರ ನನ್ನನ್ನು ಕ್ಷಮಿಸಲಿ; ನನ್ನ ಒಡೆಯ ಆರಾಧನೆಗೋಸ್ಕರ ರಿಮ್ಮೋನನ ದೇವಸ್ಥಾನಕ್ಕೆ ಹೋಗಿ, ನನ್ನ ಕೈಹಿಡಿದು, ಆ ದೇವತೆಗೆ ನಮಸ್ಕಾರ ಮಾಡುವಾಗ ನಾನೂ ನಮಸ್ಕಾರ ಮಾಡಬೇಕಾಗುವುದು. ಈ ಒಂದು ವಿಷಯದಲ್ಲಿ ಮಾತ್ರ ಸರ್ವೇಶ್ವರ ನನಗೆ ಕ್ಷಮೆಯನ್ನು ಅನುಗ್ರಹಿಸಬೇಕು,” ಎಂದನು.</verse>
				<verse number="19">ಎಲೀಷನು, “ಸಮಾಧಾನದಿಂದ ಹೋಗು,” ಎಂದು ಉತ್ತರಕೊಟ್ಟನು. ಅವನು ಹೊರಟುಹೋದನು.</verse>
				<verse number="20">ನಾಮಾನನು ಸ್ವಲ್ಪದೂರಕ್ಕೆ ಹೋದನಂತರ ದೈವಪುರುಷನಾದ ಎಲೀಷನ ಸೇವಕ ಗೇಹಜಿಯು ಮನಸ್ಸಿನಲ್ಲೇ, “ನನ್ನ ಯಜಮಾನ ಆ ಸಿರಿಯಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟರಲ್ಲಾ! ಸರ್ವೇಶ್ವರನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ, ಅವನಿಂದ ಸ್ವಲ್ಪವನ್ನಾದರೂ ಬಾಚಿಕೊಂಡು ಬರುವೆನು,” ಎಂದುಕೊಂಡು ಹೊರಟನು.</verse>
				<verse number="21">ನಾಮಾನನು ತನ್ನ ಹಿಂದೆ ಓಡುತ್ತಾ ಬರುವ ಗೇಹಜಿಯನ್ನು ಕಂಡು, ರಥದಿಂದಿಳಿದು, ಅವನನ್ನು ಎದುರುಗೊಂಡನು, “ಕ್ಷೇಮವೇ,” ಎಂದು ಕೇಳಿದನು.</verse>
				<verse number="22">ಅವನು, “ಕ್ಷೇಮ; ಎಫ್ರಯಿಮ್ ಗುಡ್ಡಪ್ರದೇಶದಿಂದ ಪ್ರವಾದಿಮಂಡಲಿಯವರಾದ ಇಬ್ಬರು ಯೌವನಸ್ಥರು ಬಂದಿರುತ್ತಾರೆ. ಆದುದರಿಂದ ಅವರಿಗಾಗಿ ಬೇಗನೆ ಮೂರುಸಾವಿರ ಬೆಳ್ಳಿಯ ನಾಣ್ಯಗಳನ್ನೂ ಎರಡು ದುಸ್ತು ಬಟ್ಟೆಗಳನ್ನೂ ತೆಗೆದುಕೊಂಡು ಬರಬೇಕೆಂಬುದಾಗಿ ನನ್ನ ಯಜಮಾನ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದರು,” ಎಂದು ಉತ್ತರಕೊಟ್ಟನು.</verse>
				<verse number="23">ನಾಮಾನನು, “ಆರು ಸಾವಿರ ನಾಣ್ಯವನ್ನಾದರೂ ತೆಗೆದುಕೊಳ್ಳಬಾರದೇ,” ಎಂದು ಅವನನ್ನು ಒತ್ತಾಯಪಡಿಸಿ, ಅದನ್ನು ಎರಡು ಚೀಲಗಳಲ್ಲಿ ಹಾಕಿಸಿ, ಆ ಚೀಲಗಳನ್ನೂ ಎರಡು ದುಸ್ತು ಬಟ್ಟೆಗಳನ್ನೂ ಇಬ್ಬರು ಸೇವಕರ ಮೇಲೆ ಹೊರಿಸಿ, ಅವರನ್ನು ಗೇಹಜಿಯ ಸಂಗಡ ಕಳುಹಿಸಿದನು. ಅವರು ಹೊತ್ತುಕೊಂಡು ಇವನ ಮುಂದೆ ನಡೆದರು.</verse>
				<verse number="24">ಗುಡ್ಡವನ್ನು ಮುಟ್ಟಿದಾಗ, ಗೇಹಜಿಯು ಅವುಗಳನ್ನು ತೆಗೆದುಕೊಂಡು, ಮನೆಯಲ್ಲಿ ಅಡಗಿಸಿಬಿಟ್ಟು, ಆಳುಗಳನ್ನು ಕಳುಹಿಸಿಬಿಟ್ಟನು.</verse>
				<verse number="25">ಅವರು ಹೋದನಂತರ, ಇವನು ತನ್ನ ಯಜಮಾನನ ಬಳಿಗೆ ಬಂದನು. ಎಲೀಷನು ಅವನನ್ನು, “ಗೇಹಜಿಯೇ, ಎಲ್ಲಿಗೆ ಹೋಗಿ ಬಂದೆ?” ಎಂದು ಕೇಳಿದನು. ಅದಕ್ಕೆ ಅವನು, “ನಿಮ್ಮ ಸೇವಕನಾದ ನಾನು ಎಲ್ಲಿಯೂ ಹೋಗಲಿಲ್ಲ,” ಎಂದು ಉತ್ತರಕೊಟ್ಟನು.</verse>
				<verse number="26">ಆಗ ಎಲೀಷನು, “ಒಬ್ಬನು ರಥದಿಂದಿಳಿದು ಬಂದು ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಿಸಲಿಲ್ಲವೆಂದು ನೆನಸುತ್ತೀಯೋ? ದ್ರವ್ಯ, ಬಟ್ಟೆಗಳು, ಎಣ್ಣೇಮರದ ತೋಪುಗಳು, ದ್ರಾಕ್ಷೀತೋಟಗಳು, ಕುರಿದನಗಳು, ಗಂಡಾಳು, ಹೆಣ್ಣಾಳುಗಳು, ಇವನ್ನು ಸಂಪಾದಿಸುವುದಕ್ಕೆ ಇದು ಸಮಯವೇ?</verse>
				<verse number="27">ನಾಮಾನನ ಚರ್ಮರೋಗವು ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ಬಾಧಿಸುವುದು,” ಎಂದನು. ಕೂಡಲೆ ಅವನಿಗೆ ಆ ರೋಗ ಹತ್ತಿತು. ಅವನು ಹಿಮದಂತೆ ಬಿಳುಪಾಗಿ, ಅಲ್ಲಿಂದ ಹೊರಟುಹೋದನು.</verse>
			</chapter>
			<chapter number="6">
				<verse number="1">ಒಂದು ಸಾರಿ ಪ್ರವಾದಿಮಂಡಲಿಯವರು ಎಲೀಷನಿಗೆ, “ನಾವು ನಿನ್ನ ಜೊತೆಯಲ್ಲಿ ವಾಸಿಸುತ್ತಿರುವ ಈ ಸ್ಥಳ ಬಹಳ ಇಕ್ಕಟ್ಟಾಗಿದೆ.</verse>
				<verse number="2">ಆದುದರಿಂದ ನಾವು ಜೋರ್ಡನಿಗೆ ಹೋಗಿ ಅಲ್ಲಿ ಪ್ರತಿಯೊಬ್ಬನೂ ಒಂದೊಂದು ದಿಮ್ಮಿಯನ್ನು ಕಡಿದುಕೊಂಡು ಬಂದು ನಮಗೆ ಇರಲು ಒಂದು ಮನೆಯನ್ನು ಕಟ್ಟಿಕೊಳ್ಳೋಣ,” ಎಂದರು. ಅವನು ಅವರಿಗೆ, “ಹೋಗಬಹುದು,” ಎಂದು ಹೇಳಿದನು.</verse>
				<verse number="3">ಅವರಲ್ಲೊಬ್ಬನು, “ದಯವಿಟ್ಟು ತಾವೂ ತಮ್ಮ ಸೇವಕರಾದ ನಮ್ಮ ಜೊತೆಯಲ್ಲಿ ಬರಬೇಕು,” ಎಂದು ಬೇಡಿಕೊಂಡನು. ಎಲೀಷನು, “ಬರುತ್ತೇನೆ,” ಎಂದು ಹೇಳಿ ಅವರೊಡನೆ ಹೊರಟನು.</verse>
				<verse number="4">ಅವರು ಜೋರ್ಡನನ್ನು ಮುಟ್ಟಿ ಮರಗಳನ್ನು ಕಡಿಯುತ್ತಿರುವಾಗ ಒಬ್ಬನ ಕೊಡಲಿ, ಕಾವು ತಪ್ಪಿ, ನೀರೊಳಗೆ ಬಿದ್ದಿತು.</verse>
				<verse number="5">ಆದುದರಿಂದ ಅವನು, “ಅಯ್ಯೋ! ಗುರುವೇ, ನಾನು ಅದನ್ನು ಸಾಲವಾಗಿ ತಂದಿದ್ದೆ,” ಎಂದು ಸಂತಾಪಿಸಿದನು.</verse>
				<verse number="6">ದೈವಪುರುಷನು, “ಅದು ಎಲ್ಲಿ ಬಿದ್ದಿತು?” ಎಂದು ಕೇಳಿದನು; ಅದು ಬಿದ್ದ ಸ್ಥಳವನ್ನು ಅವನು ತೋರಿಸಿದನು. ಆಗ ದೈವಪುರುಷನು ಆ ಮರದಿಂದ ಒಂದು ತುಂಡು ಕಟ್ಟಿಗೆಯನ್ನು ಕಡಿದು ಅಲ್ಲಿ ಹಾಕಿದನು; ಕೂಡಲೆ ಆ ಕೊಡಲಿ ತೇಲಾಡಿತು.</verse>
				<verse number="7">ಎಲೀಷನು, “ಅದನ್ನು ತೆಗೆದುಕೋ,” ಎಂದು ಆಜ್ಞಾಪಿಸಲು ಆ ವ್ಯಕ್ತಿ ಕೈಚಾಚಿ ಅದನ್ನು ತೆಗೆದುಕೊಂಡನು.</verse>
				<verse number="8">ಸಿರಿಯಾದ ರಾಜನು ಇಸ್ರಯೇಲರಿಗೆ ವಿರುದ್ಧ ಯುದ್ಧಕ್ಕೆ ಬಂದನು. ಅವನು ಯುದ್ಧದಲ್ಲಿ ಹೊಂಚುಹಾಕತಕ್ಕ ಸ್ಥಳವನ್ನು ತನ್ನ ಸೇನಾಪತಿಗಳೊಡನೆ ಗೊತ್ತುಮಾಡುತ್ತಿದ್ದನು.</verse>
				<verse number="9">ಆದರೆ ದೈವಪುರುಷನು, ಪ್ರತೀಸಾರಿ ಇಸ್ರಯೇಲರ ಅರಸನಿಗೆ, “ಜಾಗರೂಕತೆಯಿಂದಿರಿ! ನೀವು ಇಂಥಿಂಥ ಸ್ಥಳದಲ್ಲಿ ಹಾಯಬಾರದು, ಅಲ್ಲಿ ಸಿರಿಯಾದವರು ಅಡಗಿಕೊಂಡಿದ್ದಾರೆ,” ಎಂದು ತಿಳಿಸುತ್ತಿದ್ದನು.</verse>
				<verse number="10">ಹೀಗೆ ಅವನು ಹಲವು ಸಾರಿ ಸಿರಿಯಾದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡನು.</verse>
				<verse number="11">ಈ ಕಾರಣ ಸಿರಿಯಾದ ಅರಸನು ಕಳವಳಗೊಂಡು, ತನ್ನ ಸೇನಾಪತಿಗಳನ್ನು ಕರೆದು, “ನಮ್ಮವರಲ್ಲಿ ಇಸ್ರಯೇಲರ ಅರಸನ ಪಕ್ಷದವರು ಯಾರೋ ಇದ್ದಾರೆ; ನನಗೆ ನೀವು ಯಾರೂ ತಿಳಿಸುವುದಿಲ್ಲವೇ?’ ಎಂದು ಕೇಳಿದನು.</verse>
				<verse number="12">ಆಗ ಅವರಲ್ಲೊಬ್ಬನು, “ನನ್ನ ಒಡೆಯರಾದ ಅರಸೇ, ಹಾಗಲ್ಲ; ಇಸ್ರಯೇಲರಲ್ಲಿ ಎಲೀಷನೆಂಬೊಬ್ಬ ಪ್ರವಾದಿಯಿದ್ದಾನೆ; ನೀವು ನಿಮ್ಮ ಮಲಗುವ ಕೋಣೆಯಲ್ಲಿ ಆಡುವ ಮಾತುಗಳನ್ನು ಸಹ ಅವನು ಅರಿತುಕೊಂಡು ಎಲ್ಲವನ್ನೂ ಇಸ್ರಯೇಲರ ಅರಸನಿಗೆ ತಿಳಿಸುತ್ತಾನೆ,” ಎಂದನು.</verse>
				<verse number="13">ಅರಸನು ಇದನ್ನು ಕೇಳಿ, “ಅವನು ಎಲ್ಲಿರುತ್ತಾನೆಂದು ವಿಚಾರಿಸಿರಿ, ನಾನು ಅವನನ್ನು ಹಿಡಿಯುತ್ತೇನೆ,” ಎಂದು ಹೇಳಿದನು.</verse>
				<verse number="14">ಆ ಪ್ರವಾದಿ ದೋತಾನಿನಲ್ಲಿರುತ್ತಾನೆಂದು ತಿಳಿದುಕೊಂಡು ರಥರಥಾಶ್ವಸಹಿತವಾದ ಮಹಾಸೈನ್ಯವನ್ನು ಅಲ್ಲಿಗೆ ಕಳುಹಿಸಿದನು. ಸೈನ್ಯದವರು ರಾತ್ರಿಯಲ್ಲೇ ಆ ಪಟ್ಟಣವನ್ನು ಸಮೀಪಿಸಿ, ಅದಕ್ಕೆ ಮುತ್ತಿಗೆ ಹಾಕಿದರು.</verse>
				<verse number="15">ದೈವಪುರುಷನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಹೋದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು, ಪಟ್ಟಣದ ಸುತ್ತಲೂ ನಿಂತಿರುವುದನ್ನು ಕಂಡು, ತನ್ನ ಯಜಮಾನನಿಗೆ, “ಅಯ್ಯೋ! ಗುರುವೇ, ಏನು ಮಾಡೋಣ?” ಎಂದನು.</verse>
				<verse number="16">ಆಗ ಎಲೀಷನು, “ಹೆದರಬೇಡ; ಅವರ ಕಡೆ ಇರುವವರಿಗಿಂತಲೂ ನಮ್ಮ ಕಡೆ ಇರುವವರು ಹೆಚ್ಚಾಗಿದ್ದಾರೆ,” ಎಂದು ಹೇಳಿ,</verse>
				<verse number="17">“ಹೇ ಸರ್ವೇಶ್ವರಾ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆಯಿರಿ,” ಎಂದು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಕಣ್ಣುಗಳನ್ನು ತೆರೆದರು. ಆಗ ಎಲೀಷನ ರಕ್ಷಣೆಗಾಗಿ ಸುತ್ತಣ ಗುಡ್ಡಗಳಲ್ಲಿ ಬಂದು ನಿಂತಿದ್ದ ಅಗ್ನಿಮಯವಾದ ರಥರಥಾಶ್ವಗಳು ಆ ಸೇವಕನಿಗೆ ಕಂಡವು.</verse>
				<verse number="18">ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು, “ಸ್ವಾಮೀ, ಈ ಜನರನ್ನು ಕುರುಡರನ್ನಾಗಿ ಮಾಡಿ,” ಎಂದು ಸರ್ವೇಶ್ವರನನ್ನು ಪ್ರಾರ್ಥಿಸಿದನು. ಅವರು ಅವನ ಮೊರೆಯನ್ನು ಆಲಿಸಿ ಆ ಜನರನ್ನು ಕುರುಡರನ್ನಾಗಿ ಮಾಡಿದರು.</verse>
				<verse number="19">ಆಗ ಎಲೀಷನು, “ನೀವು ಹೋಗಬೇಕೆಂದಿದ್ದ ಪಟ್ಟಣವೂ ದಾರಿಯೂ ಇದಲ್ಲ; ನನ್ನ ಜೊತೆಯಲ್ಲೇ ಬನ್ನಿ, ನೀವು ಹುಡುಕುತ್ತಿರುವ ವ್ಯಕ್ತಿಯ ಬಳಿಗೆ ನಿಮ್ಮನ್ನು ಕರೆದುಕೊಂಡು ಹೋಗುತ್ತೇನೆ,” ಎಂದು ಹೇಳಿ ಅವರನ್ನು ಸಮಾರಿಯಕ್ಕೆ ಕರೆದುಕೊಂಡು ಹೋದನು.</verse>
				<verse number="20">ಅವರು ಸಮಾರಿಯದೊಳಗೆ ಬಂದಾಗ ಎಲೀಷನು, “ಇವರು ನೋಡುವಂತೆ ಇವರ ಕಣ್ಣುಗಳನ್ನು ತೆರೆಯಿರಿ,” ಎಂದು ಸರ್ವೇಶ್ವರನನ್ನು ಬೇಡಿಕೊಂಡನು. ಅಂತೆಯೇ ಸರ್ವೇಶ್ವರ ಅವರ ಕಣ್ಣುಗಳನ್ನು ತೆರೆದರು. ಆಗ ಅವರಿಗೆ ತಾವು ಸಮಾರಿಯದಲ್ಲಿದ್ದೇವೆಂದು ತಿಳಿದುಬಂದಿತು.</verse>
				<verse number="21">ಇಸ್ರಯೇಲರ ಅರಸನು ಅವರನ್ನು ಕಂಡು ಎಲೀಷನಿಗೆ, ‘ಅಪ್ಪಾ ಗುರುವೇ, ಇವರನ್ನು ಸಂಹರಿಸಲೇ?, ಸಂಹರಿಸಲೇ?’ ಎಂದು ಕೇಳಿದನು.</verse>
				<verse number="22">ಅವನು, “ಬೇಡ; ನೀನು ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ಕತ್ತಿಬಿಲ್ಲುಗಳಿಂದ ಸಂಹರಿಸುವೆಯೋ? ಅವರಿಗೆ ಅನ್ನಪಾನಗಳನ್ನು ಕೊಡು; ಉಂಡುಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ,” ಎಂದು ಉತ್ತರಕೊಟ್ಟನು.</verse>
				<verse number="23">ಆಗ ಅರಸನು ಅವರಿಗಾಗಿ ಒಂದು ದೊಡ್ಡ ಔತಣವನ್ನು ಮಾಡಿಸಿ, ಅವರು ಅನ್ನಪಾನಗಳನ್ನು ತೆಗೆದುಕೊಂಡ ಮೇಲೆ, ಅವರನ್ನು ಅವರ ಯಜಮಾನನ ಬಳಿಗೆ ಕಳುಹಿಸಿದನು. ಅಂದಿನಿಂದ ಸುಲಿಗೆಮಾಡುವ ಸಿರಿಯಾದ ಗುಂಪುಗಳು ಇಸ್ರಯೇಲರ ಪ್ರಾಂತದೊಳಗೆ ಮತ್ತೆ ಬರಲಿಲ್ಲ.</verse>
				<verse number="24">ಆಮೇಲೆ ಸಿರಿಯಾದ ರಾಜ ಬೆನ್ಹದದನು ತನ್ನ ಸೈನ್ಯವನ್ನೆಲ್ಲಾ ಕೂಡಿಸಿಕೊಂಡು ಬಂದು ಸಮಾರಿಯಕ್ಕೆ ಮುತ್ತಿಗೆ ಹಾಕಿದನು.</verse>
				<verse number="25">ಆಗ ಸಮಾರಿಯ ಪಟ್ಟಣದಲ್ಲಿ ಘೋರ ಕ್ಷಾಮವಿತ್ತು. ಮುತ್ತಿಗೆಯ ನಿಮಿತ್ತ ಅದು ಮತ್ತಷ್ಟು ಘೋರವಾಗಿ ಒಂದು ಕತ್ತೆಯ ತಲೆಯನ್ನು ಒಂಬತ್ತು ಬೆಳ್ಳಿ ನಾಣ್ಯಗಳಿಗೂ, ಇನ್ನೂರು ಗ್ರಾಂ ಕಾಡು ಈರುಳ್ಳಿಯನ್ನು ಐದು ಬೆಳ್ಳಿ ನಾಣ್ಯಗಳಿಗೂ ಮಾರಲಾಗುತ್ತಿತ್ತು.</verse>
				<verse number="26">ಒಂದು ದಿನ ಇಸ್ರಯೇಲರ ಅರಸನು ಕೋಟೆಯ ಮೇಲೆ ತಿರುಗಾಡುತ್ತಿರುವಾಗ ಒಬ್ಬ ಮಹಿಳೆ, “ಅರಸರೇ, ನಮ್ಮ ಒಡೆಯರೇ, ನನ್ನನ್ನು ಕಾಪಾಡಿ,” ಎಂದು ಮೊರೆಯಿಟ್ಟಳು.</verse>
				<verse number="27">ಅರಸನು ಆಕೆಗೆ, “ಸರ್ವೇಶ್ವರಸ್ವಾಮಿ ನಿನ್ನನ್ನು ಕಾಪಾಡದಿದ್ದರೆ ನಾನು ಹೇಗೆ ಕಾಪಾಡಲು ಸಾಧ್ಯ? ಕಣದಲ್ಲಾಗಲಿ, ದ್ರಾಕ್ಷೀ ಆಲೆಯಲ್ಲಾಗಲಿ ಏನಾದರೂ ಇದೆಯೇ?’ ಎಂದು ಕೇಳಿ,</verse>
				<verse number="28">“ನಿನಗಿರುವ ದುಃಖ ಯಾವುದು?” ಎಂದನು. ಆಗ ಆಕೆ, “ಈ ಸ್ತ್ರೀ ನನಗೆ, ‘ನಿನ್ನ ಮಗನನ್ನು ತೆಗೆದುಕೊಂಡು ಬಾ; ನಾವು ಈ ದಿನ ಅವನನ್ನು ತಿಂದುಬಿಡೋಣ; ನಾಳೆ ನನ್ನ ಮಗನನ್ನು ತಿನ್ನೋಣ,’ ಎಂದು ಹೇಳಿದ್ದರಿಂದ ನಾವಿಬ್ಬರೂ ನನ್ನ ಮಗನನ್ನು ಕೊಂದು ಬೇಯಿಸಿ ತಿಂದುಬಿಟ್ಟೆವು.</verse>
				<verse number="29">ಮರುದಿನ ನಾನು ಈಕೆಗೆ, ‘ಈ ದಿನ ನಿನ್ನ ಮಗನನ್ನು ತೆಗೆದುಕೊಂಡು ಬಾ; ಅವನನ್ನು ಕೊಂದು ತಿನ್ನೋಣ,’ ಎಂದಾಗ ಈಕೆ ಅವನನ್ನು ಎಲ್ಲಿಯೋ ಅಡಗಿಸಿಬಿಟ್ಟಳು,” ಎಂದು ಹೇಳಿದಳು.</verse>
				<verse number="30">ಕೋಣೆಯ ಮೇಲೆ ತಿರುಗಾಡುತ್ತಿದ್ದ ಅರಸನು ಆ ಮಹಿಳೆಯ ಮಾತನ್ನು ಕೇಳಿದೊಡನೆ ಸಿಟ್ಟಿನಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು. ಆಗ ಅವನ ಮೈಮೇಲೆ ಗೋಣಿತಟ್ಟು ಇರುವುದು ಜನರಿಗೆ ಕಂಡಿತು.</verse>
				<verse number="31">ಇದಲ್ಲದೆ ಅವನು, “ನಾನು ಈ ದಿನ ಶಾಫಾಟನ ಮಗ ಎಲೀಷನ ತಲೆಯನ್ನು ಹಾರಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ!” ಎಂದು ಆಣೆಯಿಟ್ಟುಕೊಂಡನು.</verse>
				<verse number="32">ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರ ಇದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿಹಿಡಿಯಿರಿ; ಅವನ ಹಿಂದೆಯೇ ಬರುತ್ತಿರುವ ಅವನೊಡೆಯನ ಕಾಲು ಸಪ್ಪಳ ಕೇಳಿಸುತ್ತಿದೆಯಲ್ಲವೆ?” ಎಂದು ಹೇಳಿದನು.</verse>
				<verse number="33">ಅವನು ಅವರೊಡನೆ ಮಾತಾಡುತ್ತಿರುವಾಗಲೇ ಆ ಆಳೂ ಅವನ ಹಿಂದಿನಿಂದ ಅರಸನೂ ಅಲ್ಲಿಗೆ ಬಂದರು. ಅರಸನು ಎಲೀಷನಿಗೆ, “ನೋಡು, ಈ ಆಪತ್ತು ಸರ್ವೇಶ್ವರನಿಂದಲೇ ಬಂದದ್ದು. ಇನ್ನು ಮುಂದೆ ನಾನೇಕೆ ಆತನನ್ನು ನಂಬಿ ನಿರೀಕ್ಷಿಸಿಕೊಂಡಿರಬೇಕು?” ಎಂದನು.</verse>
			</chapter>
			<chapter number="7">
				<verse number="1">ಆಗ ಎಲೀಷನು, “ಸರ್ವೇಶ್ವರಸ್ವಾಮಿಯ ಈ ವಾಕ್ಯವನ್ನು ಕೇಳು: ‘ನಾಳೆ ಇಷ್ಟೇಹೊತ್ತಿಗೆ ಸಮಾರಿಯಪಟ್ಟಣದ ಬಾಗಿಲಿನಲ್ಲಿ ಗೋದಿಹಿಟ್ಟು ನಾಣ್ಯಕ್ಕೆ ಮೂರು ಕಿಲೋಗ್ರಾಂನಂತೆಯೂ ಜವೆಗೋದಿಯು ನಾಣ್ಯಕ್ಕೆ ಆರು ಕಿಲೋಗ್ರಾಂನಂತೆಯೂ ಮಾರಲಾಗುವುದು’ ಎನ್ನುತ್ತಾರೆ,” ಎಂದು ಹೇಳಿದನು.</verse>
				<verse number="2">ಇದನ್ನು ಕೇಳಿ ಅರಸನ ಹಸ್ತಕನಾದ ಸರದಾರನು ದೈವಪುರುಷನಿಗೆ, “ಸರ್ವೇಶ್ವರ ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು,” ಎಂದನು. ಅದಕ್ಕೆ ಎಲೀಷನು, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವೆ; ಆದರೆ ಅದನ್ನು ಅನುಭವಿಸಲಾರೆ,” ಎಂದು ಹೇಳಿದನು.</verse>
				<verse number="3">ಊರುಬಾಗಿಲಿನ ಹತ್ತಿರ ನಾಲ್ಕುಮಂದಿ ಕುಷ್ಠರೋಗಿಗಳಿದ್ದರು. ಅವರು ತಮ್ಮೊಳಗೇ, “ನಾವು ಸಾಯುವ ತನಕ ಇಲ್ಲೇ ಕುಳಿತಿರಬೇಕೇ?</verse>
				<verse number="4">ಪಟ್ಟಣದೊಳಗೆ ಕ್ಷಾಮ ಇರುವುದರಿಂದ ಅಲ್ಲಿಗೆ ಹೋದರೂ ಸಾಯಬೇಕು. ಇಲ್ಲಿಯೇ ಕುಳಿತಿದ್ದರೂ ಸಾಯಬೇಕು. ಆದುದರಿಂದ ಹೊರಟುಹೋಗಿ ಸಿರಿಯಾದವರ ಪಾಳೆಯವನ್ನು ಸೇರೋಣ. ಅವರು ನಮ್ಮನ್ನು ಉಳಿಸುವುದಾದರೆ ಉಳಿಸಲಿ, ಕೊಲ್ಲುವುದಾದರೆ ಕೊಲ್ಲಲಿ,” ಎಂದು ಮಾತಾಡಿಕೊಂಡರು.</verse>
				<verse number="5">ಸಾಯಂಕಾಲವಾದಾಗ ಅವರು ಸಿರಿಯಾದವರ ಪಾಳೆಯಕ್ಕೆ ಹೊರಟರು; ಪಾಳೆಯದ ಅಂಚಿಗೆ ಬಂದಾಗ ಅಲ್ಲಿ ಒಬ್ಬನೂ ಕಾಣಿಸಲಿಲ್ಲ.</verse>
				<verse number="6">ಸರ್ವೇಶ್ವರ ಸಿರಿಯಾದ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯಘೋಷವು ಕೇಳಿಸುವಂತೆ ಮಾಡಿದ್ದರು. ಆದ್ದರಿಂದ ಅವರು, “ಇಸ್ರಯೇಲರ ಅರಸನು ಹಿತ್ತಿಯ ಹಾಗು ಈಜಿಪ್ಟ್ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರುದ್ಧ ಕರೆದುತಂದಿದ್ದಾನೆ,” ಎಂದುಕೊಂಡು,</verse>
				<verse number="7">ತಮ್ಮ ಗುಡಾರಗಳನ್ನೂ ಕತ್ತೆಕುದುರೆಗಳನ್ನೂ ಪಾಳೆಯದಲ್ಲಿದ್ದುದೆಲ್ಲವನ್ನೂ ಬಿಟ್ಟು, ತಮ್ಮ ಪ್ರಾಣರಕ್ಷಣೆಗಾಗಿ, ಅದೇ ಸಾಯಂಕಾಲದಲ್ಲಿ ಓಡಿಹೋಗಿದ್ದರು.</verse>
				<verse number="8">ಆ ಕುಷ್ಠರೋಗಿಗಳು ಪಾಳೆಯದ ಅಂಚಿಗೆ ಬಂದಾಗ ಮೊದಲನೆಯ ಡೇರೆಯನ್ನು ಹೊಕ್ಕು ಉಂಡು, ಕುಡಿದು ಅದರಲ್ಲಿದ್ದ ಬೆಳ್ಳಿ ಬಂಗಾರವನ್ನೂ ಬಟ್ಟೆಗಳನ್ನೂ ತೆಗೆದುಕೊಂಡು ಬಚ್ಚಿಟ್ಟರು. ಇನ್ನೊಂದು ಡೇರೆಯನ್ನು ಹೊಕ್ಕು ಅಲ್ಲಿಂದಲೂ ತೆಗೆದುಕೊಂಡು ಅಡಗಿಸಿ ಇಟ್ಟರು.</verse>
				<verse number="9">ಅನಂತರ ಅವರು, “ಇದು ಶುಭವಾರ್ತೆಯ ದಿವಸ; ನಾವು ಇದನ್ನು ಪ್ರಕಟಿಸದಿರುವುದು ಒಳ್ಳೆಯದಲ್ಲ. ಬೆಳಗಾಗುವವರೆಗೆ ತಡಮಾಡಿದರೆ ಶಿಕ್ಷೆಗೆ ಪಾತ್ರರಾಗಬಹುದು. ಆದುದರಿಂದ ಹೋಗಿ ಅರಮನೆಯವರಿಗೆ ಈ ಸಂಗತಿಯನ್ನು ತಿಳಿಸೋಣ,” ಎಂದು ಮಾತಾಡಿಕೊಂಡರು.</verse>
				<verse number="10">ಅಲ್ಲಿಂದ ಹೊರಟು ಊರಬಾಗಿಲಿಗೆ ಬಂದು, ಕಾವಲುಗಾರರಿಗೆ, “ನಾವು ಸಿರಿಯಾದವರ ಪಾಳೆಯಕ್ಕೆ ಹೋಗಿದ್ದೆವು; ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯಶಬ್ದವೇ ಕೇಳಿಸಲಿಲ್ಲ. ಕತ್ತೆಕುದುರೆಗಳನ್ನು ಅಲ್ಲಲ್ಲಿ ಕಟ್ಟಲಾಗಿದೆ. ಡೇರೆಗಳು ಇದ್ದ ಹಾಗೆಯೇ ಇರುತ್ತವೆ,” ಎಂದು ಕೂಗಿ ತಿಳಿಸಿದರು.</verse>
				<verse number="11">ದ್ವಾರಪಾಲಕರು ಕೂಡಲೆ ಅರಮನೆಯವರನ್ನು ಕೂಗಿ ಅವರಿಗೆ ಈ ಸಮಾಚಾರವನ್ನು ಮುಟ್ಟಿಸಿದರು.</verse>
				<verse number="12">ಅರಸನು ರಾತ್ರಿಯಲ್ಲೇ ಎದ್ದು ತನ್ನ ಪರಿವಾರದವರಿಗೆ, “ಸಿರಿಯಾದವರ ಹಂಚಿಕೆಯನ್ನು ಹೇಳುತ್ತೇನೆ ಕೇಳಿ; ನಾವು ಹಸಿವೆಯಿಂದ ಸಾಯುವವರಾಗಿದ್ದೇವೆ ಎಂಬುದನ್ನು ಅವರು ಬಲ್ಲರು. ಆದುದರಿಂದ ಪಾಳೆಯವನ್ನು ಬಿಟ್ಟುಹೋಗಿ ಅಡವಿಯಲ್ಲಿ ಅಡಗಿಕೊಂಡಿದ್ದಾರೆ; ನಾವು ಪಟ್ಟಣದಿಂದ ಹೊರಗೆ ಹೋದ ಕೂಡಲೆ ನಮ್ಮನ್ನು ಸಜೀವಿಗಳನ್ನಾಗಿಯೇ ಹಿಡಿದು ಪಟ್ಟಣವನ್ನು ಪ್ರವೇಶಿಸಬೇಕೆಂದಿದ್ದಾರೆ,” ಎಂದನು.</verse>
				<verse number="13">ಆಗ ಅವರಲ್ಲೊಬ್ಬನು ಅರಸನಿಗೆ, “ರಾಹುತರು ಪಟ್ಟಣದಲ್ಲುಳಿದಿರುವ ಕುದುರೆಗಳಲ್ಲಿ ನಾಲ್ಕೈದು ಕುದುರೆಗಳನ್ನು ತೆಗೆದುಕೊಂಡು ನೋಡುವುದಕ್ಕೆ ಹೋಗಲಿ; ಅವರಿಗೆ ಪಟ್ಟಣದಲ್ಲಿ ಉಳಿದಿರುವ ಇಸ್ರಯೇಲರ ಗತಿಯಾಗಲಿ ಅಥವಾ ಸತ್ತುಹೋದವರ ಗತಿಯಾಗಲಿ ಸಂಬವಿಸುವದಷ್ಟೆ,” ಎಂದು ಹೇಳಿದನು.</verse>
				<verse number="14">ಕೂಡಲೆ ಅರಸನು ಎರಡು ಜೋಡಿ ಕುದುರೆಗಳನ್ನು ತರಿಸಿ, ಸಿರಿಯಾದವರ ಸೈನ್ಯವೆಲ್ಲಿರುತ್ತದೆಂಬುದನ್ನು ನೋಡಿಬರುವುದಕ್ಕಾಗಿ, ರಾಹುತರನ್ನು ಕಳುಹಿಸಿದನು.</verse>
				<verse number="15">ಅವರು ಜೋರ್ಡನ್ ನದಿಯವರೆಗೂ ಹೋಗಿ, ದಾರಿಯಲ್ಲೆಲ್ಲಾ ತಮ್ಮ ಬಟ್ಟೆಬರೆಗಳನ್ನೂ ಸಾಮಾನು ಸರಂಜಾಮುಗಳನ್ನೂ ಬಿಸಾಡಿರುವುದನ್ನು ಕಂಡು, ಹಿಂದಿರುಗಿ ಬಂದು ಅರಸನಿಗೆ ತಿಳಿಸಿದರು.</verse>
				<verse number="16">ಆಗ ಜನರು ಹೊರಗೆ ಹೋಗಿ, ಸಿರಿಯಾದವರ ಪಾಳೆಯವನ್ನು ಸೂರೆಮಾಡಿಬಿಟ್ಟರು. ಸರ್ವೇಶ್ವರನ ಮಾತಿನಂತೆ ಗೋದಿಹಿಟ್ಟು ನಾಣ್ಯಕ್ಕೆ ಮೂರು ಕಿಲೋಗ್ರಾಂನಂತೆಯೂ ಜವೆಗೋದಿಯು ನಾಣ್ಯಕ್ಕೆ ಆರು ಕಿಲೋಗ್ರಾಂನಂತೆಯೂ ಮಾರಲಾಗುತ್ತಿತ್ತು.</verse>
				<verse number="17">ಅರಸನು ತನ್ನ ಹಸ್ತಕನಾದ ಸರದಾರನನ್ನು ಊರ ದ್ವಾರಪಾಲಕರ ನಾಯಕನನ್ನಾಗಿ ಕಳುಹಿಸಿದ್ದನು. ಅವನು ಜನರ ತುಳಿತಕ್ಕೆ ಸಿಕ್ಕಿ ಸತ್ತನು. ಹೀಗೆ ಆ ದೈವಪುರುಷನು ಅರಸನ ಜೊತೆಯಲ್ಲಿ ತನ್ನ ಬಳಿಗೆ ಬಂದಿದ್ದ ಆ ಸರದಾರನಿಗೆ ಹೇಳಿದ ಮಾತು ನೆರವೇರಿತು.</verse>
				<verse number="18">ಅವನು ಅರಸನಿಗೆ, “ನಾಳೆ ಇಷ್ಟು ಹೊತ್ತಿಗೆ ಸಮಾರಿಯ ಪಟ್ಟಣದ ಬಾಗಿಲಿನಲ್ಲಿ ಜವೆಗೋದಿ ನಾಣ್ಯಕ್ಕೆ ಆರು ಕಿಲೋಗ್ರಾಂನಂತೆಯೂ ಗೋದಿಹಿಟ್ಟು ನಾಣ್ಯಕ್ಕೆ ಮೂರು ಕಿಲೋಗ್ರಾಂನಂತೆಯೂ ಮಾರಲಾಗುವುದು,” ಎಂದು ಹೇಳಿದಾಗ</verse>
				<verse number="19">ಆ ಸರದಾರನು, “ಸರ್ವೇಶ್ವರ ಆಕಾಶದಲ್ಲಿ ದ್ವಾರಗಳನ್ನು ಮಾಡಿದರೂ ಇದು ಸಂಭವಿಸಲಾರದು,” ಎಂದದ್ದರಿಂದ ದೈವಪುರುಷನು ಅವನಿಗೆ, “ನೀನು ಅದನ್ನು ಕಣ್ಣಾರೆ ಕಾಣುವೆ; ಆದರೆ ಅದನ್ನು ಅನುಭವಿಸಲಾರೆ,” ಎಂದು ನುಡಿದಿದ್ದನು.</verse>
				<verse number="20">ಊರು ಬಾಗಿಲಿನಲ್ಲಿ ಜನರಿಂದ ತುಳಿತಕ್ಕೆ ಸಿಕ್ಕಿ ಅವನು ಸತ್ತದ್ದರಿಂದ ಈ ಮಾತು ನೆರವೇರಿತು.</verse>
			</chapter>
			<chapter number="8">
				<verse number="1">ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಸರ್ವೇಶ್ವರಸ್ವಾಮಿ ಈ ನಾಡಿಗೆ ಏಳು ವರ್ಷಗಳ ಬರಗಾಲವನ್ನು ಕಳುಹಿಸಲಿದ್ದಾರೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು,” ಎಂದು ಭವಿಷ್ಯ ಹೇಳಿದನು.</verse>
				<verse number="2">ಆಕೆ ದೈವಪುರುಷನ ಅಪ್ಪಣೆಯಂತೆ ತನ್ನ ಮನೆಯವರೊಡನೆ ಸ್ವಂತನಾಡನ್ನು ಬಿಟ್ಟುಹೋಗಿ ಫಿಲಿಷ್ಟಿಯರ ದೇಶದಲ್ಲಿ ವಾಸವಾಗಿದ್ದಳು.</verse>
				<verse number="3">ಏಳು ವರ್ಷಗಳಾದನಂತರ ಆಕೆ ಅಲ್ಲಿಂದ ಸ್ವಂತ ನಾಡಿಗೆ ಬಂದು, ಪರರ ಕೈವಶವಾಗಿದ್ದ ತನ್ನ ಹೊಲಮನೆಗಳಿಗಾಗಿ ಮೊರೆಯಿಡಲು ಅರಸನ ಬಳಿಗೆ ಬಂದಳು.</verse>
				<verse number="4">ಆ ಸಮಯದಲ್ಲೇ ಅರಸನು, ದೈವಪುರುಷನ ಸೇವಕನಾದ ಗೇಹಜಿಗೆ, “ಎಲೀಷನು ಮಾಡಿದ ಎಲ್ಲಾ ಅದ್ಭುತಕಾರ್ಯಗಳನ್ನು ನನಗೆ ವಿವರಿಸು,” ಎಂದು ಆಜ್ಞಾಪಿಸಿದ್ದನು.</verse>
				<verse number="5">ಎಲೀಷನು ಸತ್ತ ಹುಡುಗನಿಗೆ ಜೀವದಾನಮಾಡಿದ ಸಂಗತಿಯನ್ನು ಗೇಹಜಿಯು ವಿವರಿಸುತ್ತಿರುವಾಗಲೇ, ಜೀವದಾನಹೊಂದಿದ ಹುಡುಗನ ತಾಯಿ ತನ್ನ ಹೊಲಮನೆಗಳಿಗಾಗಿ ಮೊರೆಯಿಡಲು ಅರಸನ ಬಳಿಗೆ ಬಂದಳು. ಕೂಡಲೆ ಗೇಹಜಿಯು, “ಅರಸರೇ, ನನ್ನ ಒಡೆಯರೇ, ಎಲೀಷನು ಬದುಕಿಸಿದ ಹುಡುಗನು ಇವನೇ; ಈಕೆ ಇವನ ತಾಯಿ,” ಎಂದು ಹೇಳಿದನು.</verse>
				<verse number="6">ಅರಸನು ಈ ಸಂಗತಿಯ ವಿಷಯವಾಗಿ ಆ ಸ್ತ್ರೀಯನ್ನೇ ವಿಚಾರಿಸಿದನು. ಆಕೆ ಅದರಂತೆಯೇ ಹೇಳಿದಳು. ಆಗ ಅರಸನು ಒಬ್ಬ ಕಂಚುಕಿಯನ್ನು ಕರೆದು, “ಹೋಗಿ ಈಕೆಯ ಹೊಲಮನೆಗಳನ್ನೂ ಈಕೆ ಈ ನಾಡನ್ನು ಬಿಟ್ಟಂದಿನಿಂದ ಇಂದಿನವರೆಗೂ ಈಕೆಗೆ ಸಲ್ಲತಕ್ಕ ಹೊಲದ ಆದಾಯವನ್ನೂ ಕೊಡಿಸು,” ಎಂದು ಆಜ್ಞಾಪಿಸಿ ಅವನನ್ನು ಆಕೆಯ ಜೊತೆಯಲ್ಲೇ ಕಳುಹಿಸಿದನು.</verse>
				<verse number="7">ಒಮ್ಮೆ ಎಲೀಷನು ದಮಸ್ಕಕ್ಕೆ ಹೋದನು. ಆಗ ಸಿರಿಯಾದ ಅರಸನಾದ ಬೆನ್ಹದದನು ಅಸ್ವಸ್ಥನಾಗಿದ್ದನು. ದೈವಪುರುಷ ಬಂದಿದ್ದಾನೆಂಬ ಸುದ್ದಿಯನ್ನು ಕೇಳಿ,</verse>
				<verse number="8">ಅವನು ಹಜಾಯೇಲನನ್ನು ಕರೆದು, “ನೀನು ಕಾಣಿಕೆಯನ್ನು ತೆಗೆದುಕೊಂಡು ದೈವಪುರುಷನ ಬಳಿಗೆ ಹೋಗಿ ನನಗೆ ಗುಣ ಆಗುವುದೋ ಇಲ್ಲವೋ ಎಂಬುದನ್ನು ಅವನ ಮುಖಾಂತರ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸು,” ಎಂದು ಆಜ್ಞಾಪಿಸಿದನು.</verse>
				<verse number="9">ಹಜಾಯೇಲನು ದಮಸ್ಕದ ಶ್ರೇಷ್ಠವಸ್ತುಗಳಲ್ಲಿ, ನಾಲ್ವತ್ತು ಒಂಟೆಗಳು ಹೊರುವಷ್ಟನ್ನು ತೆಗೆದುಕೊಂಡು, ಎಲೀಷನ ಬಳಿಗೆ ಹೋಗಿ ಅವನ ಮುಂದೆ ನಿಂತು, “ನಿಮ್ಮ ಕುಮಾರ, ಸಿರಿಯಾದವರ ಅರಸನಾದ ಬೆನ್ಹದದರು, ತಮಗೆ ಗುಣವಾಗುವುದೋ ಇಲ್ಲವೋ ಎಂಬುದನ್ನು ವಿಚಾರಿಸುವುದಕ್ಕಾಗಿ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದು ಹೇಳಿದನು.</verse>
				<verse number="10">ಆಗ ದೈವಪುರುಷನಾದ ಎಲೀಷನು, “ಖಂಡಿತವಾಗಿ ಗುಣವಾಗುವುದು ಎಂಬುದಾಗಿ ಬೆನ್ಹದದನಿಗೆ ಹೇಳು; ಆದರೂ ಅವನು ಸತ್ತುಹೋಗುವುದು ನಿಶ್ಚಯವೆಂದು ಸರ್ವೇಶ್ವರ ನನಗೆ ತಿಳಿಸಿದ್ದಾರೆ,”</verse>
				<verse number="11">ಎಂದು ಹೇಳಿ ಬಿಗಿ ಮುಖದಿಂದ, ಸ್ಥಿರದೃಷ್ಟಿಯಿಂದ ಹಜಾಯೇಲನನ್ನೇ ದಿಟ್ಟಿಸಿ ನೋಡಿ ಅಳತೊಡಗಿದನು.</verse>
				<verse number="12">ಹಜಾಯೇಲನು, “ನನ್ನೊಡೆಯಾ, ಏಕೆ ಅಳುತ್ತೀರಿ?” ಎಂದು ಕೇಳಿದನು. ಅದಕ್ಕೆ ಅವನು, “ನೀನು ಇಸ್ರಯೇಲರಿಗೆ ಎಷ್ಟು ಕೇಡು ಮಾಡುವೆಯೆಂಬುದು ನನಗೆ ಪ್ರಕಟವಾಯಿತು. ನೀನು ಅವರ ಕೋಣೆಗಳಿಗೆ ಬೆಂಕಿ ಹೊತ್ತಿಸುವೆ; ಯೌವನಸ್ಥರನ್ನು ಕತ್ತಿಯಿಂದ ಸಂಹರಿಸುವೆ; ಮಕ್ಕಳನ್ನು ಬಂಡೆಗೆ ಅಪ್ಪಳಿಸುವೆ; ಗರ್ಭಿಣಿಯರ ಹೊಟ್ಟೆಯನ್ನು ಸೀಳುವೆ,” ಎಂದು ಉತ್ತರಕೊಟ್ಟನು.</verse>
				<verse number="13">ಹಜಾಯೇಲನು ಎಲೀಷನನ್ನು, “ನಿಮ್ಮ ಸೇವಕನಾದ ನಾನು ನಾಯಿಯಂತಿರುತ್ತೇನಷ್ಟೆ; ನನ್ನಿಂದ ಇಂಥ ಮಹಾಕಾರ್ಯವಾಗುವುದು ಹೇಗೆ?” ಎಂದು ಕೇಳಿದನು. ಅವನು, “ನೀನು ಸಿರಿಯಾದವರ ರಾಜನಾಗುವೆಯೆಂದು ಸರ್ವೇಶ್ವರ ನನಗೆ ತಿಳಿಸಿದ್ದಾರೆ,” ಎಂದನು.</verse>
				<verse number="14">ಹಜಾಯೇಲನು ಎಲೀಷನನ್ನು ಬಿಟ್ಟು ತನ್ನ ಯಜಮಾನನ ಬಳಿಗೆ ಹೋದಾಗ ಅವನು, “ಎಲೀಷ ಏನು ಹೇಳಿದರು?” ಎಂದು ಕೇಳಿದನು. ಅದಕ್ಕೆ ಇವನು, “ನಿಮಗೆ ಖಂಡಿತವಾಗಿ ಗುಣವಾಗುವುದೆಂದು ಹೇಳಿದರು,” ಎಂಬುದಾಗಿ ಉತ್ತರಕೊಟ್ಟನು.</verse>
				<verse number="15">ಮರುದಿನ ಬೆಳಿಗ್ಗೆ ಇವನು ಒಂದು ಹೊದಿಕೆಯನ್ನು ನೀರಿನಲ್ಲಿ ತೋಯಿಸಿ ಅರಸನ ಮುಖದ ಮೇಲೆ ಹಾಕಿದನು; ಅವನು ಸತ್ತನು. ಹಜಾಯೇಲನು ಅವನ ಸ್ಥಾನದಲ್ಲಿ ಅರಸನಾದನು.</verse>
				<verse number="16">ಅಹಾಬನ ಮಗನೂ ಇಸ್ರಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಜುದೇಯದ ರಾಜನಾದ ಯೆಹೋಷಾಫಾಟನ ಮಗ ಯೆಹೋರಾಮನು ಆಳತೊಡಗಿದನು.</verse>
				<verse number="17">ಇವನು ಪಟ್ಟಕ್ಕೆ ಬಂದಾಗ ಮೂವತ್ತೆರಡು ವರ್ಷದವನಾಗಿದ್ದನು. ಜೆರುಸಲೇಮಿನಲ್ಲಿ ಎಂಟು ವರ್ಷ ಆಳಿದನು.</verse>
				<verse number="18">ಇವನು ಅಹಾಬನ ಮಗಳನ್ನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಯೇಲ್ ಅರಸರ ಹೆಜ್ಜೆಯಲ್ಲೇ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.</verse>
				<verse number="19">ಆದರೂ ಸರ್ವೇಶ್ವರ ಜುದೇಯದ ರಾಜ್ಯವನ್ನು ನಾಶಮಾಡಲಿಲ್ಲ. “ನಿನ್ನನ್ನು ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂಬುದಾಗಿ ತಮ್ಮ ದಾಸ ದಾವೀದನಿಗೆ ಮಾಡಿದ ಪ್ರಮಾಣವನ್ನು ಸ್ಮರಿಸಿ ಅದನ್ನು ಉಳಿಸಿದರು.</verse>
				<verse number="20">ಇವನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರುದ್ಧ ದಂಗೆ ಎದ್ದು ಸ್ವತಂತ್ರರಾಗಿ ತಮಗೆ ಒಬ್ಬ ಅರಸನನ್ನು ನೇಮಿಸಿಕೊಂಡರು.</verse>
				<verse number="21">ಆಗ ಯೆಹೋರಾಮನು ತನ್ನ ಎಲ್ಲಾ ರಥಬಲಸಹಿತವಾಗಿ ಜೋರ್ಡನ್ ಹೊಳೆಯನ್ನು ದಾಟಿ ಚಾಯೀರಿಗೆ ಹೋದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಂಡರು. ಅವನು ರಾತ್ರಿಯಲ್ಲೆದ್ದು ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು. ಅವನ ಸೈನ್ಯದವರೂ ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.</verse>
				<verse number="22">ಹೀಗೆ ಎದೋಮ್ಯರು ಯೆಹೂದ್ಯರಿಗೆ ವಿರುದ್ಧ ದಂಗೆ ಎದ್ದರು. ಅವರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿರುತ್ತಾರೆ. ಅದೇ ಕಾಲದಲ್ಲಿ ಲಿಬ್ನದವರೂ ಸ್ವತಂತ್ರರಾದರು.</verse>
				<verse number="23">ಯೆಹೋರಾಮನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳು ಜುದೇಯದ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.</verse>
				<verse number="24">ಅವನು ನಿಧನನಾಗಿ ಪಿತೃಗಳ ಬಳಿ ಸೇರಲು ಅವನ ಶವವನ್ನು ದಾವೀದನಗರದೊಳಗೆ ಕುಟುಂಬ ಸ್ಮಶಾನ ಭೂಮಿಯಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಅಹಜ್ಯನು ಅರಸನಾದನು.</verse>
				<verse number="25">ಅಹಾಬನ ಮಗನೂ ಇಸ್ರಯೇಲರ ಅರಸನೂ ಆದ ಯೋರಾಮನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಜುದೇಯದ ಅರಸನಾದ ಯೆಹೋರಾಮನ ಮಗ ಅಹಜ್ಯನು ಅರಸನಾದನು.</verse>
				<verse number="26">ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೆರಡು ವರ್ಷದ ವಯಸ್ಸಿನವನಾಗಿದ್ದನು. ಜೆರುಸಲೇಮಿನಲ್ಲಿ ಒಂದು ವರ್ಷ ಆಳಿದನು. ಇಸ್ರಯೇಲರ ಅರಸನಾದ ಒಮ್ರಿಯನ ಮೊಮ್ಮಗಳಾದ ಅತಲ್ಯ ಎಂಬಾಕೆ ಇವನ ತಾಯಿ.</verse>
				<verse number="27">ಇವನಿಗೂ ಅಹಾಬನ ಕುಟುಂಬದವರಿಗೂ ಬೀಗತನ ಇದ್ದುದರಿಂದ ಇವನು ಅವರ ಹೆಜ್ಜೆಯಲ್ಲೇ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.</verse>
				<verse number="28">ಇದಲ್ಲದೆ, ಇವನು ಸಿರಿಯಾದವರ ಅರಸನಾದ ಹಜಾಯೇಲನೊಡನೆ ಯುದ್ಧಮಾಡುವುದಕ್ಕಾಗಿ ಅಹಾಬನ ಮಗ ಯೋರಾಮನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಹೋದನು.</verse>
				<verse number="29">ಸಿರಿಯಾದವರು ಯೋರಾಮನನ್ನು ಗಾಯಪಡಿಸಿದರು. ಯುದ್ಧದಲ್ಲಾದ ಗಾಯಗಳನ್ನು ಮಾಗಿಸಿಕೊಳ್ಳುವುದಕ್ಕಾಗಿ ಅವನು ಜೆಸ್ರೀಲಿಗೆ ಬಂದನು. ಅವನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸನಾದ ಯೆಹೋರಾಮನ ಮಗ ಅಹಜ್ಯನು ಅವನನ್ನು ನೋಡುವುದಕ್ಕಾಗಿ ಅಲ್ಲಿಗೆ ಹೋದನು.</verse>
			</chapter>
			<chapter number="9">
				<verse number="1">ಪ್ರವಾದಿ ಎಲೀಷನು ಪ್ರವಾದಿಮಂಡಲಿಯವರಲ್ಲಿ ಒಬ್ಬನನ್ನು ಕರೆದು, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.</verse>
				<verse number="2">ಆ ಊರನ್ನು ಮುಟ್ಟಿದನಂತರ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಎಲ್ಲಿರುತ್ತಾನೆಂದು ವಿಚಾರಿಸು. ಅವನು ಸಿಕ್ಕಿದಾಗ ಅವನನ್ನು ಅವನ ಜೊತೆಗಾರರ ಗುಂಪಿನಿಂದ ಪ್ರತ್ಯೇಕವಾಗಿ ಕರೆದುಕೊಂಡು ಒಳಗಿನ ಕೋಣೆಗೆ ಹೋಗು.</verse>
				<verse number="3">ತರುವಾಯ ಕುಪ್ಪಿಯಲ್ಲಿರುವ ಈ ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು, ‘ನಾನು ನಿನ್ನನ್ನು ಇಸ್ರಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆಂದು ಸರ್ವೇಶ್ವರ ನುಡಿದಿದ್ದಾರೆ,’ ಎಂಬುದಾಗಿ ಹೇಳಿ ಕೂಡಲೆ ಬಾಗಿಲು ತೆರೆದು ಓಡಿಹೋಗು,” ಎಂದು ಆಜ್ಞಾಪಿಸಿದನು.</verse>
				<verse number="4">ಆಗ ಪ್ರವಾದಿಯ ಸೇವಕನಾದ ಆ ಯೌವನಸ್ಥನು ರಾಮೋತ್ ಗಿಲ್ಯಾದಿಗೆ ಹೋಗಿ,</verse>
				<verse number="5">ಸೈನ್ಯಾಧಿಪತಿಗಳೆಲ್ಲಾ ಒಂದು ಕಡೆಯಲ್ಲಿ ಕೂಡಿರುವುದನ್ನು ಕಂಡು, ಅವರನ್ನು ಸಮೀಪಿಸಿ, “ಸೇನಾಪತಿಯೇ, ನಿಮಗೊಂದು ಮಾತು ಹೇಳಬೇಕಾಗಿದೆ,” ಎಂದನು. ಯೇಹುವು, “ನಮ್ಮಲ್ಲಿ ಯಾರಿಗೆ?” ಎಂದು ಕೇಳಿದನು. ಅವನು, “ಸೇನಾಪತಿಯಾದ ನಿಮಗೇ ಹೇಳಬೇಕಾಗಿದೆ,” ಎಂದು ಉತ್ತರಕೊಟ್ಟನು.</verse>
				<verse number="6">ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು, ಆ ಯೌವನಸ್ಥನು ಇವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು, “ಇಸ್ರಯೇಲ್ ದೇವರಾದ ಸರ್ವೇಶ್ವರನ ಮಾತನ್ನು ಕೇಳು; ಅವರು ನಿನಗೆ, ‘ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ.</verse>
				<verse number="7">ನೀನು ನಿನ್ನ ಯಜಮಾನನಾದ ಅಹಾಬನ ಮನೆಯವರನ್ನು ಸಂಹರಿಸಿಬಿಡು; ಆಗ ನನ್ನ ಸೇವಕರಾದ ಪ್ರವಾದಿಗಳೇ ಮೊದಲಾದ ಸರ್ವೇಶ್ವರನ ಭಕ್ತರ ರಕ್ತವನ್ನು ಸುರಿಸಿದ್ದಕ್ಕಾಗಿ ನಾನು ಈಜೆಬೆಲಳಿಗೆ ಮುಯ್ಯಿ ತೀರಿಸಿದಂತಾಗುವುದು.</verse>
				<verse number="8">ಅಹಾಬನ ಕುಟುಂಬದವರೆಲ್ಲಾ ನಿರ್ನಾಮವಾಗಬೇಕು. ಅವನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಿರಲಿ, ಪರತಂತ್ರರಾಗಿರಲಿ ಎಲ್ಲರನ್ನೂ ಇಸ್ರಯೇಲರ ಮಧ್ಯೆಯಿಂದ ತೆಗೆದುಹಾಕುವೆನು.</verse>
				<verse number="9">ನೆಬಾಟನ ಮಗ ಯಾರೊಬ್ಬಾಮನ ಮನೆಗೂ ಅಹೀಯನ ಮಗ ಬಾಷನ ಮನೆಗೂ ಆದ ಗತಿಯೇ ಅಹಾಬನ ಮನೆಗೂ ಆಗುವುದು.</verse>
				<verse number="10">ಈಜೆಬೆಲಳ ಶವವು ಸಮಾಧಿಯನ್ನು ಸೇರುವುದಿಲ್ಲ; ನಾಯಿಗಳು ಅದನ್ನು ಜೆಸ್ರೀಲಿನ ಹೊಲದಲ್ಲಿ ತಿಂದುಬಿಡುವುವು;’ ಎನ್ನುತ್ತಾರೆ,” ಎಂದು ಹೇಳಿ ಬಾಗಿಲು ತೆರೆದು ಓಡಿಹೋದನು.</verse>
				<verse number="11">ಯೇಹುವು ಮರಳಿ ತನ್ನ ಒಡೆಯನ ಸೇವಕರ ಹತ್ತಿರ ಬಂದನು. ಅವರು ಅವನನ್ನು, “ಶುಭವಾರ್ತೆಯೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇಕೆ?” ಎಂದು ಕೇಳಿದರು. ಅದಕ್ಕೆ ಅವನು, “ಆ ಮನುಷ್ಯ ಎಂಥವನು, ಅವನ ಮಾತು ಎಂಥದು ಎಂಬುದು ನಿಮಗೆ ಗೊತ್ತಲ್ಲವೆ?” ಎಂದು ಉತ್ತರಕೊಟ್ಟನು.</verse>
				<verse number="12">ಆದರೆ ಅವರು, “ಅದು ಸುಳ್ಳು; ಅವನು ಹೇಳಿದ್ದನ್ನು ತಿಳಿಸು,” ಎಂದು ಅವನನ್ನು ಒತ್ತಾಯಪಡಿಸಿದರು. ಆದ್ದರಿಂದ ಅವನು, “ನಿನ್ನನ್ನು ಇಸ್ರಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದಾನೆಂಬುದಾಗಿ ಸರ್ವೇಶ್ವರ ನುಡಿದಿದ್ದಾರೆ ಎಂಬೀ ಮೊದಲಾದ ಮಾತುಗಳನ್ನು ಹೇಳಿದನು,” ಎಂದು ಉತ್ತರಕೊಟ್ಟನು.</verse>
				<verse number="13">ಕೂಡಲೆ ಅವರು ಅವನಿಗಾಗಿ ಮೆಟ್ಟಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ, ತುತೂರಿಯನ್ನು ಊದಿಸಿ, “ಯೇಹುವು ಅರಸನಾಗಿದ್ದಾನೆ,” ಎಂದು ಆರ್ಭಟಿಸಿದರು.</verse>
				<verse number="14">ಹೀಗೆ ನಿಂಷಿಯ ಮೊಮ್ಮಗನೂ ಯೆಹೋಷಾಫಾಟನ ಮಗನೂ ಆದ ಯೇಹುವು ಯೋರಾಮನಿಗೆ ಒಳಸಂಚು ಮಾಡಿದನು. (ಸಿರಿಯಾದವರ ಅರಸನಾದ ಹಜಾಯೇಲನು ರಾಮೋತ್ ಗಿಲ್ಯಾದಿಗೆ ಮುತ್ತಿಗೆ ಹಾಕಿದನು. ಯೋರಾಮನು ಅದನ್ನು ಕಾಪಾಡುವುದಕ್ಕಾಗಿ ಎಲ್ಲಾ ಇಸ್ರಯೇಲರ ಸಹಿತ ಹೋಗಿ, ಹಜಾಯೇಲನೊಡನೆ ಯುದ್ಧಮಾಡಿದನು.</verse>
				<verse number="15">ಆಗ ಗಾಯಗೊಂಡು ಅದನ್ನು ಮಾಗಿಸಿಕೊಳ್ಳುವುದಕ್ಕಾಗಿ ಹಿಂದಿರುಗಿ ಜೆಸ್ರೀಲಿಗೆ ಬಂದಿದ್ದನು.) ಯೇಹುವು ತನ್ನ ಜೊತೆಗಾರನಿಗೆ, “ನೀವು ನನ್ನವರಾಗಿದ್ದರೆ, ಈ ಸುದ್ದಿ ಜೆಸ್ರೀಲನ್ನು ಮುಟ್ಟದಂತೆ, ಒಬ್ಬನನ್ನೂ ಈ ಪಟ್ಟಣದಿಂದ ಹೊರಗೆ ಬಿಡಬೇಡಿ,” ಎಂದು ಹೇಳಿದನು.</verse>
				<verse number="16">ಅನಂತರ ಅವನು ರಥದಲ್ಲಿ ಕುಳಿತು ಜೆಸ್ರೀಲಿಗೆ ಹೋಗುವುದಕ್ಕಾಗಿ ಹೊರಟನು. ಅಲ್ಲಿ ಅಸ್ವಸ್ಥನಾದ ಯೋರಾಮನೂ ಅವನನ್ನು ನೋಡುವುದಕ್ಕೆ ಬಂದಿದ್ದ ಯೆಹೂದ್ಯರ ಅರಸನಾದ ಅಹಜ್ಯನೂ ಇದ್ದರು.</verse>
				<verse number="17">ಜೆಸ್ರೀಲಿನ ಗೋಪುರದಲ್ಲಿದ್ದ ಕಾವಲುಗಾರನು ಯೇಹುವಿನ ಗುಂಪಿನವರನ್ನು ಕಂಡು, “ಜನರ ಒಂದು ಗುಂಪು ಕಾಣಿಸುತ್ತಿದೆ,” ಎಂದು ಯೋರಾಮನಿಗೆ ತಿಳಿಸಿದನು. ಯೋರಾಮನು, “ನೀನು ಒಬ್ಬ ರಾಹುತನನ್ನು ಕರೆದು, ಬರುತ್ತಿರುವವರು ಶುಭವಾರ್ತೆಯನ್ನು ತರುತ್ತಾರೋ ಇಲ್ಲವೋ ಎಂದು ಕೇಳುವುದಕ್ಕಾಗಿ ಕಳುಹಿಸು,” ಎಂಬುದಾಗಿ ಆಜ್ಞಾಪಿಸಿದನು.</verse>
				<verse number="18">ರಾಹುತನು ಯೇಹುವನ್ನು ಎದುರುಗೊಂಡು, “ಅರಸರು ‘ಶುಭವಾರ್ತೆಯುಂಟೊ?’ ಎಂದು ಕೇಳುತ್ತಾರೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು? ನನ್ನ ಹಿಂದೆ ಬಾ,” ಎಂದನು. ಕಾವಲುಗಾರನು ಅರಸನಿಗೆ, “ರಾಹುತನು ಆ ಗುಂಪನ್ನು ಮುಟ್ಟಿದನು; ಆದರೆ ತಿರುಗಿಬರುವುದು ಕಾಣಿಸುವುದಿಲ್ಲ,” ಎಂದು ತಿಳಿಸಿದಾಗ ಅರಸನು ಇನ್ನೊಬ್ಬ ರಾಹುತನನ್ನು ಕಳುಹಿಸಿದನು.</verse>
				<verse number="19">ಇವನು ಹೋಗಿ ಯೇಹುವನ್ನು ಎದುರುಗೊಂಡು, “ಅರಸರು ‘ಶುಭವಾರ್ತೆಯುಂಟೊ?’ ಎಂದು ಕೇಳುತ್ತಾರೆ,” ಎನ್ನಲು ಅವನು, “ಶುಭವಾರ್ತೆಯಿಂದ ನಿನಗೇನು?, ನನ್ನ ಹಿಂದೆ ಬಾ,” ಎಂದನು.</verse>
				<verse number="20">ಕಾವಲುಗಾರನು ಪುನಃ ಅರಸನಿಗೆ, “ಎರಡನೆಯವನೂ ಆ ಗುಂಪನ್ನು ಮುಟ್ಟಿದನು; ಆದರೆ ಹಿಂದಿರುಗಿ ಬರುವುದು ಕಾಣಿಸುವುದೇ ಇಲ್ಲ. ರಥದಲ್ಲಿ ಕುಳಿತಿರುವವನು ಕುದುರೆಗಳನ್ನು ಹುಚ್ಚುಹಿಡಿದವನಂತೆ ಓಡಿಸುವುದನ್ನು ನೋಡಿದರೆ ಅವನು, ನಿಂಷಿಯ ಮೊಮ್ಮಗನಾದ ಯೇಹುವಾಗಿರಬೇಕು,” ಎಂದು ಹೇಳಿದನು.</verse>
				<verse number="21">ಯೋರಾಮನು ರಥಹೂಡಬೇಕೆಂದು ತನ್ನ ಸೇವಕರಿಗೆ ಆಜ್ಞಾಪಿಸಿದನು. ಅವರು ಹೂಡಿದರು. ಆಗ ಇಸ್ರಯೇಲರ ಅರಸನಾದ ಇವನೂ ಯೆಹೂದ್ಯರ ಅರಸನಾದ ಅಹಜ್ಯನೂ ತಮ್ಮ ತಮ್ಮ ರಥಗಳಲ್ಲಿ ಕುಳಿತುಕೊಂಡು, ಯೇಹುವನ್ನು ಎದುರುಗೊಳ್ಳುವುದಕ್ಕಾಗಿ ಹೊರಟು, ಜೆಸ್ರೀಲಿನವನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು.</verse>
				<verse number="22">ಯೋರಾಮನು ಅವನನ್ನು ಕಂಡ ಕೂಡಲೆ, “ಯೇಹುವೇ, ಶುಭವೋ?’ ಎಂದು ಕೇಳಿದನು. ಅದಕ್ಕೆ ಅವನು, “ನಿನ್ನ ತಾಯಿಯ ದೇವದ್ರೋಹವೂ ಮಂತ್ರತಂತ್ರವೂ ಪ್ರಬಲವಾಗಿರುವಲ್ಲಿ ಶುಭವೆಲ್ಲಿಂದ ಬರುವುದು?” ಎಂದು ಉತ್ತರಕೊಟ್ಟನು.</verse>
				<verse number="23">ಒಡನೆ ಯೋರಾಮನು ತನ್ನ ರಥವನ್ನು ತಿರುಗಿಸಿ ಅಹಜ್ಯನಿಗೆ, “ಅಹಜ್ಯನೇ, ಇದು ಒಳಸಂಚು,” ಎಂದು ಹೇಳಿ ಓಡಿಹೋದನು.</verse>
				<verse number="24">ಯೇಹುವು ಪೂರ್ಣಬಲದಿಂದ ಬಿಲ್ಲನ್ನು ಬಗ್ಗಿಸಿ ಯೋರಾಮನ ಬೆನ್ನಿಗೆ ಬಾಣವನ್ನೆಸೆದನು; ಅದು ಅವನ ಹೃದಯದಿಂದ ಹೊರಗೆ ಬಂದಿತು. ಅವನು ರಥದಲ್ಲೇ ಕುಸಿದುಬಿದ್ದನು.</verse>
				<verse number="25">ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ, “ಯೋರಾಮನ ಶವವನ್ನು ಎತ್ತಿ ಜೆಸ್ರೀಲಿನವನಾದ ನಾಬೋತನ ಹೊಲದಲ್ಲಿ ಹಾಕು. ಒಂದು ದಿನ ನಾವಿಬ್ಬರೂ ಕುದುರೆ ಹತ್ತಿ ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ</verse>
				<verse number="26">ಅಹಾಬನಿಗೆ ಸರ್ವೇಶ್ವರ, ‘ನನ್ನ ಮಾತನ್ನು ಕೇಳು, ನೀನು ನಿನ್ನೆ ಸುರಿಸಿದ ನಾಬೋತನ ಮತ್ತು ಅವನ ಮಕ್ಕಳ ರಕ್ತವನ್ನು ನಿಶ್ಚಯವಾಗಿ ನೋಡಿದ್ದೇನೆ. ನೀನು ಅವರ ರಕ್ತವನ್ನು ಸುರಿಸಿದ ಹೊಲದಲ್ಲೇ ನಿನಗೆ ಮುಯ್ಯಿತೀರಿಸುವೆನು,’ ಎಂದು ಪ್ರವಾದಿಯಿಂದ ಹೇಳಿಸಿದ್ದು ನಿನಗೆ ನೆನಪಿರುತ್ತದಲ್ಲವೆ?’ ಎಂದಿದ್ದರು. ಸರ್ವೇಶ್ವರನ ಆ ನುಡಿ ನೆರವೇರುವಂತೆ ಇವನ ಶವವನ್ನು ಆ ಹೊಲದಲ್ಲೇ ಹಾಕಿಬಿಡು,” ಎಂದು ಹೇಳಿದನು.</verse>
				<verse number="27">ಜುದೇಯದ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತ್‍ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ,” ಎಂದು ಕೂಗಲು ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.</verse>
				<verse number="28">ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಜೆರುಸಲೇಮಿನಲ್ಲಿರುವ ದಾವೀದ ನಗರಕ್ಕೆ ತಂದು ಅದನ್ನು ಅವನ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.</verse>
				<verse number="29">ಅಹಜ್ಯನು ಅಹಾಬನ ಮಗನಾದ ಯೋರಾಮನ ಆಳ್ವಿಕೆಯ ಹನ್ನೊಂದನೆಯ ವರ್ಷದಲ್ಲಿ ಯೆಹೂದ್ಯರ ಅರಸನಾಗಿದ್ದನು.</verse>
				<verse number="30">ಯೇಹುವು ಜೆಸ್ರೀಲಿಗೆ ಬಂದನು. ಈಜೆಬೆಳು ಅದನ್ನು ಕೇಳಿ ತಲೆಯನ್ನು ಆಭರಣಗಳಿಂದ ಅಲಂಕರಿಸಿಕೊಂಡು, ಕಣ್ಣಿಗೆ ಕಾಡಿಗೆ ಹಚ್ಚಿಕೊಂಡು, ಕಿಟಕಿಯಿಂದ ನೋಡುತ್ತಾ ನಿಂತಳು.</verse>
				<verse number="31">ಅನಂತರ ಅರಮನೆಯ ಪ್ರಾಕಾರದೊಳಗೆ ಬಂದು ಯೇಹುವನ್ನು ಕಂಡು, “ಯಜಮಾನನನ್ನು ಕೊಂದ ಜಿಮ್ರಿಗೆ ಸಮಾನನೇ, ಕ್ಷೇಮವೇ?” ಎಂದು ಕೇಳಿದಳು.</verse>
				<verse number="32">ಅವನು ಕಣ್ಣೆತ್ತಿ ಕಿಟಕಿಯ ಕಡೆಗೆ ನೋಡಿ, “ಅಲ್ಲಿ ನನ್ನ ಪಕ್ಷದವರು ಯಾರು?” ಎಂದು ಕೂಗಿದನು. ಕೂಡಲೆ ಆ ಕಿಟಕಿಯಿಂದ ಇಬ್ಬರು ಮೂವರು ಕಂಚುಕಿಗಳು ಅವನ ಕಡೆಗೆ ನೋಡಿದರು.</verse>
				<verse number="33">ಅವನು ಅವರಿಗೆ, “ಆಕೆಯನ್ನು ಕೆಳಗೆ ದೊಬ್ಬಿರಿ,” ಎಂದು ಆಜ್ಞಾಪಿಸಲು ಅವರು ದೊಬ್ಬಿದರು. ಆಕೆಯ ರಕ್ತ ಗೋಡೆಗೂ ಕುದುರೆಗಳಿಗೂ ಸಿಡಿಯಿತು. ಅವನು ಆಕೆಯ ಶವವನ್ನು ತುಳಿಸಿಬಿಟ್ಟನು.</verse>
				<verse number="34">ಅನಂತರ ಅವನು ಅರಮನೆಯೊಳಗೆ ಹೋಗಿ, ಅನ್ನಪಾನಗಳನ್ನು ತೆಗೆದುಕೊಂಡು, ತನ್ನ ಸೇವಕರಿಗೆ, “ಆ ಶಾಪಗ್ರಸ್ತ ಸ್ತ್ರೀಯ ಶವವನ್ನು ಸರಿಯಾಗಿ ಸಮಾಧಿಮಾಡಿರಿ; ಆಕೆ ರಾಜಪುತ್ರಿಯಾಗಿರುತ್ತಾಳಷ್ಟೆ,” ಎಂದು ಆಜ್ಞಾಪಿಸಿದನು.</verse>
				<verse number="35">ಸೇವಕರು ಶವವನ್ನು ಸಮಾಧಿಮಾಡುವುದಕ್ಕಾಗಿ ಹೋದರು. ಆದರೆ ಅವರಿಗೆ ಆಕೆಯ ತಲೆಬುರುಡೆ, ಕೈಕಾಲುಗಳು ಹೊರತಾಗಿ ಬೇರೇನೂ ಸಿಕ್ಕಲಿಲ್ಲ.</verse>
				<verse number="36">ಅವರು ಹಿಂದಿರುಗಿ, ಯೇಹುವಿನ ಹತ್ತಿರ ಬಂದು, ಆ ಸಂಗತಿಯನ್ನು ತಿಳಿಸಿದರು. ಅವನು ಅವರಿಗೆ, “’ನಾಯಿಗಳು ಈಜೆಬೆಲಳ ದೇಹಮಾಂಸವನ್ನು ಜೆಸ್ರೀಲಿನ ಹೊಲದಲ್ಲಿ ತಿಂದುಬಿಡುವುವು;</verse>
				<verse number="37">ಆಕೆಯ ಶವ ಆ ಹೊಲಕ್ಕೆ ಗೊಬ್ಬರವಾಗುವುದು; ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು’ ಎಂಬುದಾಗಿ ತಿಷ್ಬೀಯನೂ ತಮ್ಮ ದಾಸನೂ ಆದ ಎಲೀಯನ ಮುಖಾಂತರ ಸರ್ವೇಶ್ವರ ಹೇಳಿಸಿದ ಮಾತು ಈಗ ನೆರವೇರಿತು,” ಎಂದನು.</verse>
			</chapter>
			<chapter number="10">
				<verse number="1">ಸಮಾರಿಯ ಪಟ್ಟಣದಲ್ಲಿ ಅಹಾಬನ ಸಂತಾನದ ಎಪ್ಪತ್ತು ಮಂದಿ ರಾಜಪುತ್ರರಿದ್ದರು. ಯೇಹುವು ಆ ಪಟ್ಟಣದಲ್ಲಿದ್ದ ಜೆಸ್ರೀಲಿನ ಅಧಿಕಾರಿಗಳಾದ ಹಿರಿಯರಿಗೂ ರಾಜಪುತ್ರಪಾಲಕರಿಗೂ ಪತ್ರಗಳನ್ನು ಬರೆದು ಅವುಗಳನ್ನು ದೂತರ ಮುಖಾಂತರ ಕಳುಹಿಸಿದನು.</verse>
				<verse number="2">ಅವುಗಳಲ್ಲಿ, “ನಿಮ್ಮ ವಶದಲ್ಲಿ ನಿಮ್ಮ ಯಜಮಾನನ ಮಕ್ಕಳೂ ರಥಾಶ್ವಬಲಗಳೂ ಕೋಟೆಕೊತ್ತಲುಗಳುಳ್ಳ ಪಟ್ಟಣವೂ ಯುದ್ಧಾಯುಧಗಳೂ ಇರುತ್ತವಷ್ಟೆ.</verse>
				<verse number="3">ಆ ಪತ್ರವು ನಿಮಗೆ ಮುಟ್ಟಿದೊಡನೆ ಆ ರಾಜಪುತ್ರರಲ್ಲಿ ಉತ್ತಮನೂ ಸಮರ್ಥನೂ ಆದ ಒಬ್ಬನನ್ನು ಆರಿಸಿಕೊಂಡು, ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿ, ನಿಮ್ಮ ಯಜಮಾನನ ಕುಟುಂಬದವರ ಪರವಾಗಿ ಯುದ್ಧಮಾಡಿ,” ಎಂಬುದಾಗಿ ಬರೆದಿತ್ತು.</verse>
				<verse number="4">ಅವರು ಬಹಳವಾಗಿ ಭಯಪಟ್ಟರು. ಇಬ್ಬರು ರಾಜರೂ ಅವನ ಮುಂದೆ ನಿಲ್ಲಲಾರದೆಹೋದರು. ನಾವು ನಿಲ್ಲುವುದು ಹೇಗೆ?” ಎಂದುಕೊಂಡರು.</verse>
				<verse number="5">ಅನಂತರ ರಾಜಗೃಹಾಧಿಪತಿ, ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರು ಎಲ್ಲರು ಕೂಡಿ ಯೇಹುವಿಗೆ, “ನಾವು ನಿಮ್ಮ ಆಜ್ಞಾಧಾರಕರಾದ ಸೇವಕರು, ನಾವಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಳ್ಳುವುದಿಲ್ಲ; ನಿಮ್ಮ ಚಿತ್ತವೇ ನೆರವೇರಲಿ,” ಎಂದು ಹೇಳಿಕಳುಹಿಸಿದರು.</verse>
				<verse number="6">ಆಗ ಯೇಹುವು ಇನ್ನೊಂದು ಪತ್ರದ ಮೂಲಕ ಅವರಿಗೆ, “ನೀವು ನನ್ನ ಪಕ್ಷದವರಾಗಿದ್ದು ನನ್ನ ಆಜ್ಞಾನುಸಾರವಾಗಿ ನಡೆದುಕೊಳ್ಳಲು ಮನಸ್ಸುಳ್ಳವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ, ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಬನ್ನಿರಿ,” ಎಂದು ಆಜ್ಞಾಪಿಸಿದನು. ಎಪ್ಪತ್ತುಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು.</verse>
				<verse number="7">ಪ್ರಧಾನಪುರುಷರು ಪತ್ರವನ್ನು ಓದಿದೊಡನೆ ಆ ಎಪ್ಪತ್ತು ಮಂದಿಯನ್ನು ಹಿಡಿದುಕೊಂಡು ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಜೆಸ್ರೀಲಿನಲ್ಲಿದ್ದ ಯೇಹುವಿಗೆ ಕಳುಹಿಸಿದರು.</verse>
				<verse number="8">ರಾಜಪುತ್ರರ ತಲೆಗಳನ್ನು ತಂದಿದ್ದಾರೆಂಬ ಸಮಾಚಾರ ಯೇಹುವಿಗೆ ಮುಟ್ಟಿದಾಗ ಅವನು; “ಬೆಳಗಾಗುವ ತನಕ ಅವುಗಳನ್ನು ಹೆಬ್ಬಾಗಿಲಿನ ಹತ್ತಿರ ಎರಡು ರಾಶಿಗಳಾಗಿ ಹಾಕಬೇಕು,” ಎಂದು ಆಜ್ಞಾಪಿಸಿದನು.</verse>
				<verse number="9">ಮರುದಿನ ಬೆಳಿಗ್ಗೆ ಅವನು ಅವುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು, “ನೀವು ನಿರಪರಾಧಿಗಳು; ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಕೊಂದವನು; ಆದರೆ ಇವರನ್ನೆಲ್ಲಾ ಹತಿಸಿದವರಾರು?</verse>
				<verse number="10">ಇಗೋ, ಅಹಾಬನ ಮನೆಯವರನ್ನುಕುರಿತು ಸರ್ವೇಶ್ವರ ಹೇಳಿದ ಮಾತುಗಳೆಲ್ಲಾ ತಪ್ಪದೆ ನೆರವೇರುವುದೆಂದು ತಿಳಿದುಕೊಳ್ಳಿರಿ. ಸರ್ವೇಶ್ವರ ತಮ್ಮ ದಾಸನಾದ ಎಲೀಯನ ಮುಖಾಂತರ ಹೇಳಿದ್ದನ್ನು ನೆರವೇರಿಸಿದ್ದಾರಷ್ಟೇ,” ಎಂದು ಹೇಳಿದನು.</verse>
				<verse number="11">ಅನಂತರ ಅವನು ಜೆಸ್ರೀಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ ಅವನ ಸರದಾರರು, ಆಪ್ತಮಿತ್ರರು, ಪುರೋಹಿತರು ಇವರನ್ನೂ ಸಂಹರಿಸಿದನು’ ಒಬ್ಬನನ್ನೂ ಉಳಿಸಲಿಲ್ಲ.</verse>
				<verse number="12">ಆಮೇಲೆ ಯೇಹುವು ಸಮಾರಿಯಕ್ಕೆ ಹೊರಟುಹೋದನು. ದಾರಿಯಲ್ಲಿ ಕುರುಬರ ಛತ್ರಕ್ಕೆ ಬಂದಾಗ ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು, “ನೀವು ಯಾರು?” ಎಂದು ಕೇಳಿದನು.</verse>
				<verse number="13">ಅದಕ್ಕೆ ಅವರು, “ನಾವು ಅಹಜ್ಯನ ಸಹೋದರರು; ರಾಜಪುತ್ರರನ್ನೂ ರಾಜಮಾತೆಯ ಮಕ್ಕಳನ್ನೂ ವಂದಿಸುವುದಕ್ಕಾಗಿ ಇಲ್ಲಿಗೆ ಬಂದಿದ್ದೇವೆ,” ಎಂದು ಉತ್ತರಕೊಟ್ಟರು.</verse>
				<verse number="14">ಆಗ ಯೇಹುವು ತನ್ನ ಸೇವಕರಿಗೆ, “ಅವರನ್ನು ಸಜೀವಿಗಳಾಗಿ ಹಿಡಿಯಿರಿ,” ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ವಧಿಸಿ ಆ ಛತ್ರದ ಬಾವಿಯಲ್ಲಿ ಹಾಕಿದರು. ಅವರು ನಾಲ್ವತ್ತೆರಡು ಮಂದಿಯಿದ್ದರು; ಅವರಲ್ಲಿ ಒಬ್ಬನನ್ನೂ ಬಿಡಲಿಲ್ಲ.</verse>
				<verse number="15">ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿದನು. “ನಿನ್ನ ವಿಷಯದಲ್ಲಿ ನನ್ನ ಮನಸ್ಸು ಯಥಾರ್ಥವಾಗಿರುವಂತೆ ನಿನ್ನ ಮನಸ್ಸು ಯಥಾರ್ಥವಾಗಿ ಇರುತ್ತದೋ?’ ಎಂದು ಕೇಳಿದನು. ಅವನು, “ಹೌದು,” ಎಂದು ಉತ್ತರಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಕೊಡು,” ಎನ್ನಲು ಅವನು ಕೈಕೊಟ್ಟನು. ಯೇಹುವು ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.</verse>
				<verse number="16">“ನನ್ನ ಜೊತೆಯಲ್ಲಿ ಬಂದು ಸರ್ವೇಶ್ವರನಲ್ಲಿ ನನಗಿರುವ ಶ್ರದ್ಧೆಯನ್ನು ನೋಡು,” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.</verse>
				<verse number="17">ಸಮಾರಿಯವನ್ನು ಸೇರಿದ ನಂತರ ಅಲ್ಲಿ ಉಳಿದಿದ್ದ ಅಹಾಬನ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟನು. ಹೀಗೆ ಎಲೀಯನ ಮುಖಾಂತರ ಸರ್ವೇಶ್ವರ ಹೇಳಿಸಿದ ಮಾತು ನೆರವೇರಿತು.</verse>
				<verse number="18">ತರುವಾಯ ಅವನು ಎಲ್ಲಾ ಜನರನ್ನು ಕೂಡಿಸಿ ಅವರಿಗೆ, “ಅಹಾಬನು ಬಾಳ್ ದೇವತೆಯನ್ನು ಸ್ವಲ್ಪ ಮಾತ್ರ ಪೂಜಿಸಿದನು; ಯೇಹುವಾದರೋ ಅಧಿಕವಾಗಿ ಪೂಜಿಸಬೇಕೆಂದು ಇರುತ್ತಾನೆ.</verse>
				<verse number="19">ಆದುದರಿಂದ ನೀವು ಬಾಳ್ ದೇವತೆಯ ಎಲ್ಲಾ ಪ್ರವಾದಿಗಳನ್ನೂ ಭಕ್ತರನ್ನೂ ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿ; ನಾನು ಬಾಳ್ ದೇವತೆಗಾಗಿ ಮಹಾಬಲಿಯನ್ನು ಸಮರ್ಪಿಸಬೇಕೆಂದಿರುತ್ತೇನೆ. ಆದುದರಿಂದ ಅವರಲ್ಲಿ ಒಬ್ಬನೂ ಬಾರದಿರಕೂಡದು, ಬಾರದವನು ಸಾಯಬೇಕು,” ಎಂದು ಹೇಳಿದನು. ಬಾಳ್ ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು.</verse>
				<verse number="20">ಇದಲ್ಲದೆ ಅವನು ದೂತರ ಮುಖಾಂತರ, “ಬಾಳನ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಪಡಿಸಿಕೊಂಡು ಜಾತ್ರೆಗೆ ಬರಬೇಕು,” ಎಂದು ಇಸ್ರಯೇಲರ ಸಮಸ್ತ ಪ್ರಾಂತ್ಯಗಳಲ್ಲಿ ಪ್ರಕಟಿಸಿದನು.</verse>
				<verse number="21">ಆಗ ಬಾಳ್ ದೇವತೆಯ ಭಕ್ತರಲ್ಲಿ ಒಬ್ಬನೂ ತಪ್ಪದೆ ಎಲ್ಲರೂ ಕೂಡಿಬಂದುದರಿಂದ ಬಾಳನ ದೇವಸ್ಥಾನ ಸಂಪೂರ್ಣವಾಗಿ ತುಂಬಿತು.</verse>
				<verse number="22">ಯೇಹುವು ವಸ್ತ್ರಾಗಾರದ ಅಧಿಪತಿಗೆ, “ಬಾಳ್ ದೇವತೆಯ ಭಕ್ತರೆಲ್ಲರಿಗೂ ಪೂಜಾವಸ್ತ್ರಗಳನ್ನು ಕೊಡು,” ಎಂದು ಆಜ್ಞಾಪಿಸಲು ಅವನು ತಂದುಕೊಟ್ಟನು.</verse>
				<verse number="23">ಅನಂತರ ಯೇಹುವು ರೇಕಾಬನ ಮಗ ಯೆಹೋನಾದಾಬನೊಡನೆ ದೇವಸ್ಥಾನವನ್ನು ಪ್ರವೇಶಿಸಿ ಬಾಳ್ ದೇವತೆಯ ಭಕ್ತರಿಗೆ, “ಸರ್ವೇಶ್ವರನ ಭಕ್ತರು ನಿಮ್ಮ ಮಧ್ಯೆ ಬಂದಿರುತ್ತಾರೋ ವಿಚಾರಿಸಿ ನೋಡಿ; ಬಾಳನ ಭಕ್ತರು ಮಾತ್ರ ಇಲ್ಲಿರಬೇಕು,” ಎಂದು ಹೇಳಿದನು.</verse>
				<verse number="24">ಆಮೇಲೆ ಅವರು ದಹನಬಲಿ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಹೋದರು. ಇದಕ್ಕೆ ಮೊದಲೇ ಅವನು ದೇವಸ್ಥಾನದ ಹೊರಗೆ ಎಂಬತ್ತು ಮಂದಿಯನ್ನು ಕಾಯುವುದಕ್ಕಾಗಿ ಇರಿಸಿ ಅವರಿಗೆ, “ನಾನು ಯಾರನ್ನು ನಿಮ್ಮ ಕೈಗೆ ಸಿಕ್ಕುವ ಹಾಗೆ ಮಾಡುವೆನೋ ಅವರಲ್ಲಿ ಒಬ್ಬನನ್ನೂ ಬಿಡಬೇಡಿ; ಬಿಟ್ಟರೆ ಅವನ ಪ್ರಾಣಕ್ಕೆ ಬದಲಾಗಿ ನಿಮ್ಮ ಪ್ರಾಣವು ಹೋಗುವುದು,” ಎಂಬುದಾಗಿ ಆಜ್ಞಾಪಿಸಿದ್ದನು.</verse>
				<verse number="25">ದಹನಬಲಿಯನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ ಸೇನಾಪತಿಗಳಿಗೂ, “ಒಳಗೆ ಹೋಗಿ ಅವರನ್ನೆಲ್ಲಾ ಸಂಹರಿಸಿರಿ; ಒಬ್ಬನೂ ತಪ್ಪಿಸಿಕೊಳ್ಳಕೂಡದು,” ಎಂದು ಹೇಳಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿದರು.</verse>
				<verse number="26">ಬಾಳ್ ದೇವತೆಯ ದೇವಸ್ಥಾನಕ್ಕೆ ಸೇರಿದ ಕೇರಿಯನ್ನು ಪ್ರವೇಶಿಸಿ ಅಲ್ಲಿನ ವಿಗ್ರಹಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಬಿಟ್ಟರು.</verse>
				<verse number="27">ಇದಲ್ಲದೆ ಬಾಳ್ ದೇವತೆಯ ವಿಗ್ರಹಸ್ತಂಭಗಳನ್ನೂ ದೇವಸ್ಥಾನವನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಕ್ಕಾಗಿ ಉಪಯೋಗಿಸುತ್ತಾರೆ.</verse>
				<verse number="28">ಹೀಗೆ ಯೇಹುವು ಇಸ್ರಯೇಲರಲ್ಲಿ ಬಾಳನ ಪೂಜೆಯನ್ನು ನಿಲ್ಲಿಸಿದನು.</verse>
				<verse number="29">ಆದರೂ ಅವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗ ಯಾರೊಬ್ಬಾಮನ ಮಾರ್ಗವನ್ನು ಕೈಬಿಡದೆ, ಬೇತೇಲ್, ದಾನ್ ಎಂಬ ಊರುಗಳಲ್ಲಿದ್ದ ಚಿನ್ನದ ಹೋರಿಕರುಗಳನ್ನು ಪೂಜಿಸುತ್ತಿದ್ದನು.</verse>
				<verse number="30">ಸರ್ವೇಶ್ವರ ಯೇಹುವಿಗೆ, “ನೀನು ನನ್ನ ದೃಷ್ಟಿಗೆ ಸರಿಯಾದದ್ದನ್ನು ನಡೆಸಿ ನನ್ನ ಮೆಚ್ಚಿಕೆಯನ್ನು ಪಡೆದೆ; ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದೆ. ಆದುದರಿಂದ ನಿನ್ನ ಸಂತಾನದವರು ನಾಲ್ಕೆನೆಯ ತಲೆಯವರೆಗೂ ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು,” ಎಂದು ಹೇಳಿದರು.</verse>
				<verse number="31">ಆದರೆ ಅವನು ಇಸ್ರಯೇಲ್ ದೇವರಾದ ಸರ್ವೇಶ್ವರನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಪ್ರಯತ್ನಿಸಲಿಲ್ಲ; ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲಿಲ್ಲ.</verse>
				<verse number="32">ಈ ಕಾಲದಲ್ಲಿ ಇಸ್ರಯೇಲರನ್ನು ಸರ್ವೇಶ್ವರ ಕುಗ್ಗಿಸತೊಡಗಿದರು.</verse>
				<verse number="33">ಹಜಾಯೇಲನು ಬಂದು ಜೋರ್ಡನಿನ ಪೂರ್ವದಿಕ್ಕಿಗೂ, ಅರ್ನೋನ್ ತಗ್ಗಿನ ಅರೋಯೇರ್ ಪಟ್ಟಣದ ಉತ್ತರದಿಕ್ಕಿಗೂ, ಇರುವ ಗಿಲ್ಯಾದ್, ಬಾಷಾನ್, ಪ್ರಾಂತ್ಯಗಳಲ್ಲಿ ವಾಸವಾಗಿದ್ದ ಗಾದ್, ರೂಬೇನ್, ಮನಸ್ಸೆ ಕುಲಗಳವನ್ನೂ ಬೇರೆ ಎಲ್ಲಾ ಪ್ರಾಂತ್ಯಗಳಲ್ಲಿರುವ ಇಸ್ರಯೇಲರನ್ನೂ ಹಿಂಸಿಸಿದನು.</verse>
				<verse number="34">ಯೇಹುವಿನ ಉಳಿದ ಚರಿತ್ರೆಯೂ ಅವನ ಶೂರಕೃತ್ಯಗಳ ವಿವರವೂ ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.</verse>
				<verse number="35">ಅವನು ನಿಧನನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಸಮಾರಿಯದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೆಹೋವಾಹಾಜನು ಅರಸನಾದನು.</verse>
				<verse number="36">ಯೇಹುವು ಸಮಾರಿಯ ಪಟ್ಟಣದಲ್ಲಿದ್ದುಕೊಂಡು ಇಸ್ರಯೇಲರನ್ನು ಆಳಿದ್ದು ಇಪ್ಪತ್ತೆಂಟು ವರ್ಷ.</verse>
			</chapter>
			<chapter number="11">
				<verse number="1">ಅಹಜ್ಯನು ಮರಣಹೊಂದಿದನೆಂಬುದನ್ನು ಅವನ ತಾಯಿ ಅತಲ್ಯಳು ಕೇಳಿದಾಗ ರಾಜಸಂತಾನದವರನ್ನೆಲ್ಲಾ ಬೇಗನೆ ಸಂಹರಿಸಿಬಿಟ್ಟಳು.</verse>
				<verse number="2">ಆದರೆ ಅರಸ ಯೆಹೋರಾಮನ ಮಗಳೂ ಅಹಜ್ಯನ ತಂಗಿಯೂ ಆದ ಯೆಹೋಷೆಬ ಎಂಬಾಕೆ, ಯಾರಿಗೂ ತಿಳಿಯದಂತೆ ತನ್ನ ಅಣ್ಣನ ಮಗ ಯೆಹೋವಾಷನನ್ನು, ಹತವಾಗುವುದಕ್ಕಿದ್ದ ರಾಜಪುತ್ರರ ಮಧ್ಯೆಯಿಂದ, ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ, ಮಲಗುವ ಕೋಣೆಯಲ್ಲಿ ಅಡಗಿಸಿಬಿಟ್ಟಳು.</verse>
				<verse number="3">ಹೀಗೆ ಅವನು ಅತಲ್ಯಳಿಂದ ಹತವಾಗದೆ ತಪ್ಪಿಸಿಕೊಂಡು, ಆರು ವರ್ಷಗಳವರೆಗೂ ಯೆಹೋಷೆಬಳೊಡನೆ ಗುಪ್ತವಾಗಿ ಸರ್ವೇಶ್ವರನ ಆಲಯದಲ್ಲಿದ್ದನು. ಈ ಆರು ವರ್ಷಗಳಲ್ಲಿ ಅತಲ್ಯಳೇ ನಾಡನ್ನು ಆಳುತ್ತಿದ್ದಳು.</verse>
				<verse number="4">ಏಳನೆಯ ವರ್ಷದಲ್ಲಿ ಯೆಹೋಯಾದಾವನು ‘ಕಾರಿ’ ಎಂಬ ಸಿಪಾಯಿಗಳ ಮತ್ತು ಕಾವಲುದಂಡಿನವರ ಶತಾಧಿಪತಿಗಳನ್ನು ತನ್ನ ಹತ್ತಿರ ಸರ್ವೇಶ್ವರನ ಆಲಯಕ್ಕೆ ಕರೆಯಿಸಿದನು. ಅಲ್ಲಿ ಅವನು ಅವರ ಸಂಗಡ ಪ್ರಮಾಣಪೂರ್ವಕವಾದ ಒಪ್ಪಂದವನ್ನು ಮಾಡಿಕೊಂಡನಂತರ ರಾಜಕುಮಾರನನ್ನು ತೋರಿಸಿದನು.</verse>
				<verse number="5">ಅನಂತರ ಅವರಿಗೆ, “ಸಬ್ಬತ್ ದಿನದಲ್ಲಿ ಮನೆಗೆ ಹೋಗುವ ಸೈನ್ಯದ ಮೂರರಲ್ಲೊಂದು ಭಾಗ ಅರಮನೆಯನ್ನು ಕಾಯಬೇಕು;</verse>
				<verse number="6">ಇನ್ನೊಂದು ಭಾಗ ಸೂರ್ ಬಾಗಿಲಿನಲ್ಲಿಯೂ ಮತ್ತೊಂದು ಭಾಗ ಕಾವಲುದಂಡಿನ ಹಿಂದಣ ಬಾಗಿಲಿನಲ್ಲಿಯೂ ಇರಬೇಕು. ಈ ಪ್ರಕಾರ ನೀವು ಅರಮನೆಯನ್ನು ಭದ್ರವಾಗಿ ಕಾಯಬೇಕು.</verse>
				<verse number="7">ಅದೂ ಅಲ್ಲದೆ, ಸಬ್ಬತ್ ದಿನದಲ್ಲಿ ಕಾಯುವುದಕ್ಕಾಗಿ ಬರುವ ನಿಮ್ಮ ಇಮ್ಮಡಿಯಾದ ಸೈನ್ಯವು ಸರ್ವೇಶ್ವರನ ಆಲಯದಲ್ಲಿ ಅರಸನನ್ನು ಕಾಯಬೇಕು.</verse>
				<verse number="8">ನೀವು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು, ಅವನ ಸುತ್ತಲೂ ನಿಂತು, ನಿಮ್ಮ ಗುಂಪಿನಲ್ಲಿ ನುಗ್ಗುವಂಥವನನ್ನು ಸಂಹರಿಸಬೇಕು. ಅರಸನು ಹೊರಗೆ ಹೋಗಿ ಬರುವಾಗಲೆಲ್ಲಾ ನೀವು ಅವನ ಜೊತೆಯಲ್ಲೇ ಇರಬೇಕು; ಇದು ನನ್ನ ಅಪ್ಪಣೆ,” ಎಂದು ಹೇಳಿದನು.</verse>
				<verse number="9">ಯಾಜಕನಾದ ಯೆಹೋಯಾದವನು ಆಜ್ಞಾಪಿಸಿದಂತೆ ಶತಾಧಿಪತಿಗಳು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಕಾಯುವುದಕ್ಕಾಗಿ ಬರತಕ್ಕ ಸಿಪಾಯಿಗಳನ್ನು ಕರೆದುಕೊಂಡು ಅವನ ಬಳಿಗೆ ಬಂದರು.</verse>
				<verse number="10">ಅವರು ಆ ಶತಾಧಿಪತಿಗಳಿಗೆ ಸರ್ವೇಶ್ವರನ ಆಲಯದಲ್ಲಿ ಇಡಲಾಗಿದ್ದ ದಾವೀದನ ಬರ್ಜಿಯನ್ನೂ ಗುರಾಣಿಗಳನ್ನೂ ಕೊಟ್ಟನು.</verse>
				<verse number="11">ಕಾವಲುದಂಡಿನವರು ಆಯುಧ ಹಿಡಿದುಕೊಂಡು ಅರಸನನ್ನು ಕಾಯುವುದಕ್ಕಾಗಿ ದೇವಾಲಯದ ದಕ್ಷಿಣ ದಿಕ್ಕಿನ ಮೂಲೆಯಿಂದ ಬಲಿಪೀಠದವರೆಗು, ಅಲ್ಲಿಂದ ಉತ್ತರ ದಿಕ್ಕಿನ ಮೂಲೆಯವರೆಗು, ಸಾಲಾಗಿ ನಿಂತರು.</verse>
				<verse number="12">ಯೆಹೋಯಾದವನು ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜ್ಯಾಭಿಷೇಕ ಮಾಡಿದನು. ಕೂಡಲೆ ಜನರು ಚಪ್ಪಾಳೆಹೊಡೆದು, ‘ಅರಸನು ಚಿರಂಜೀವಿಯಾಗಿರಲಿ!’ ಎಂದು ಜಯಕಾರ ಮಾಡಿದರು.</verse>
				<verse number="13">ಅತಲ್ಯಳು ಕಾವಲುದಂಡಿನವರ ಮತ್ತು ಇತರ ಜನರ ಗದ್ದಲವನ್ನು ಕೇಳಿ, ಅವರು ಕೂಡಿದ್ದ ಸರ್ವೇಶ್ವರನ ಆಲಯಕ್ಕೆ ಬಂದಳು.</verse>
				<verse number="14">ಅಲ್ಲಿ ಅರಸನು ಪದ್ಧತಿಯ ಪ್ರಕಾರ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಅಧಿಪತಿಗಳೂ ತುತೂರಿಗಳನ್ನು ಊದುವವರೂ ಅರಸನ ಹತ್ತಿರ ಇದ್ದರು. ಜನಸಾಮಾನ್ಯರೆಲ್ಲರು ಸಂತೋಷದಿಂದ ಕೊಂಬೂದುತ್ತಿದ್ದರು. ಇದನ್ನು ಕಂಡ ಕೂಡಲೆ ಆಕೆ ಕೋಪದಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.</verse>
				<verse number="15">ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ ಶತಾಧಿಪತಿಗಳಿಗೆ, “ಈಕೆಯನ್ನು ಸರ್ವೇಶ್ವರನ ಆಲಯದಲ್ಲಿ ಕೊಲ್ಲಬೇಡಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಮಾಡಿ, ಹೊರಗೆ ಕರೆದುಕೊಂಡು ಹೋಗಲಿ; ಮತ್ತು ಈಕೆಯನ್ನು ಹಿಂಬಾಲಿಸುವಂಥವರನ್ನು ಕತ್ತಿಯಿಂದ ಕೊಲ್ಲಿರಿ,” ಎಂದು ಆಜ್ಞಾಪಿಸಿದನು.</verse>
				<verse number="16">ಅವರು ಆಕೆಯನ್ನು ಹಿಡಿದು ಕುದುರೆಗಳ ಬಾಗಿಲಿನಿಂದ ಅರಮನೆಗೆ ಒಯ್ದು ಅಲ್ಲಿ ಹತಿಸಿದರು.</verse>
				<verse number="17">ಅನಂತರ ಯೆಹೋಯಾದಾವನ ಪ್ರೇರಣೆಯಿಂದ ಅರಸನೂ ಪ್ರಜೆಗಳೂ ತಾವು ಸರ್ವೇಶ್ವರನ ಪ್ರಜೆಗಳಾಗಿರುವುದಾಗಿ ಪ್ರಮಾಣಮಾಡಿದರು. ಇದಲ್ಲದೆ, ರಾಜನಿಗೂ ಪ್ರಜೆಗಳಿಗೂ ಒಂದು ಒಪ್ಪಂದವಾಯಿತು.</verse>
				<verse number="18">ಯೆಹೂದ್ಯರೆಲ್ಲರೂ ಬಾಳ್ ದೇವತೆಯ ದೇವಸ್ಥಾನಕ್ಕೆ ಹೋಗಿ ಬಾಳನ ಪೂಜಾರಿಯಾದ ಮತ್ತಾನನನ್ನು ಪೀಠಗಳ ಮುಂದೆಯೇ ಕೊಂದು, ಆ ದೇವಸ್ಥಾನವನ್ನೂ ಅದರಲ್ಲಿದ್ದ ಪೀಠ ಹಾಗು ವಿಗ್ರಹಗಳನ್ನೂ ಸಂಪೂರ್ಣವಾಗಿ ಹಾಳುಮಾಡಿದರು. ಯೆಹೋಯಾದಾವನು ದೇವಾಲಯಕ್ಕೆ ಕಾವಲಿಟ್ಟನು;</verse>
				<verse number="19">ಬಳಿಕ ಶತಾಧಿಪತಿಗಳು, ‘ಕಾರಿ’ ಎನಿಸಿಕೊಳ್ಳುವ ಸೈನ್ಯ, ಕಾವಲುದಂಡು ಹಾಗು ಜನಸಾಮಾನ್ಯರು ಇವರೊಡನೆ ಅರಸನನ್ನು ಸರ್ವೇಶ್ವರನ ಆಲಯದಿಂದ ಕಾವಲುದಂಡಿನವರ ಬಾಗಿಲಿನ ಮಾರ್ಗವಾಗಿ, ಅರಮನೆಗೆ ಕರೆದುಕೊಂಡು ಹೋಗಿ, ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.</verse>
				<verse number="20">ನಾಡಿನವರೆಲ್ಲರೂ ಬಹಳವಾಗಿ ಸಂತೋಷಪಟ್ಟರು. ಪಟ್ಟಣದಲ್ಲಿ ಶಾಂತಿಯಿತ್ತು; ಅತಲ್ಯಳನ್ನು ಅರಮನೆಯಲ್ಲೇ ಕತ್ತಿಯಿಂದ ಸಂಹರಿಸಿದರು.</verse>
				<verse number="21">ಹೀಗೆ ಯೆಹೋವಾಷನು ಅರಸನಾದಾಗ ಅವನಿಗೆ ಏಳು ವರ್ಷ ವಯಸ್ಸು.</verse>
			</chapter>
			<chapter number="12">
				<verse number="1">ಯೆಹೋವಾಷನು ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅರಸನಾಗಿ ಜೆರುಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.</verse>
				<verse number="2">ಯಾಜಕನಾದ ಯೆಹೋಯಾದವನು ಅವನಿಗೆ ಬೋಧಕನಾಗಿದ್ದನು. ಆಗ ಅವನು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಳ್ಳುತ್ತಿದ್ದನು.</verse>
				<verse number="3">ಆದರೆ ಅವನು ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ. ಆದುದರಿಂದ ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.</verse>
				<verse number="4">ಯೆಹೋವಾಷನು ಯಾಜಕರಿಗೆ, “ಸರ್ವೇಶ್ವರನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧ ದ್ರವ್ಯವನ್ನು, ಅಂದರೆ ಜನಗಣತಿಯಲ್ಲಿ ಎಣಿಕೆಯಾದ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಟಿತನಾದ ವ್ಯಕ್ತಿ ತನ್ನ ಪ್ರಾಣವನನ್ನು ಬಿಡಿಸಿಕೊಳ್ಳುವುದಕ್ಕಾಗಿ ತೆರುವ ಹಣ, ಜನರು ಸರ್ವೇಶ್ವರನ ಆಲಯಕ್ಕೆ ಸ್ವೇಚ್ಛೆಯಿಂದ ತಂದು ಒಪ್ಪಿಸುವ ಹಣ, ಇವುಗಳನ್ನು ತೆಗೆದುಕೊಂಡು ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿ ಇರುತ್ತದೆ ಎಂದು ನೋಡಿ ಅದನ್ನು ಸರಿಮಾಡುವುದಕ್ಕಾಗಿ ವಿನಿಯೋಗಿಸಿರಿ.</verse>
				<verse number="5">ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣ ತೆಗೆದುಕೊಳ್ಳಬೇಕು,” ಎಂದು ಆಜ್ಞಾಪಿಸಿದನು.</verse>
				<verse number="6">ಯಾಜಕರು ಅರಸನಾದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದವರೆಗೂ ದೇವಾಲಯದ ದುರಸ್ತುಕಾರ್ಯವನ್ನು ಕೈಗೊಂಡಿರಲಿಲ್ಲ.</verse>
				<verse number="7">ಆದುದರಿಂದ ಅವನು ಯೆಹೋಯಾದಾವ ಮೊದಲಾದ ಯಾಜಕರನ್ನು ಕರೆದು, “ನೀವು ಈವರೆಗೂ ದೇವಾಲಯವನ್ನೇಕೆ ದುರಸ್ತು ಮಾಡಲಿಲ್ಲ? ಇನ್ನು ಮುಂದೆ ನಿಮ್ಮ ಪರಿಚಿತರು ತಂದುಕೊಡುವ ಹಣವನ್ನು ನಿಮ್ಮ ಕೈಯಲ್ಲಿಟ್ಟುಕೊಳ್ಳದೆ. ಕೂಡಲೆ ಅದನ್ನು ದೇವಾಲಯದ ದುರಸ್ತಿಗಾಗಿ ಕೊಡಿ,” ಎಂದು ಹೇಳಿದನು.</verse>
				<verse number="8">ಆಗ ಯಾಜಕರು, “ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ, ದೇವಾಲಯದ ದುರಸ್ತಿಗಾಗಿ ಕೈಹಾಕುವುದಿಲ್ಲ,” ಎಂಬುದಾಗಿ ಮಾತುಕೊಟ್ಟರು.</verse>
				<verse number="9">ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಬಂದು, ಅದರ ಮುಚ್ಚಳದಲ್ಲಿ ತೂತುಮಾಡಿ, ಅದನ್ನು ಸರ್ವೇಶ್ವರನ ಆಲಯದ ಬಾಗಿಲಿನ ಬಲಗಡೆಯಲ್ಲಿ, ಬಲಿಪೀಠದ ಹತ್ತಿರ ಇಟ್ಟನು. ದ್ವಾರಪಾಲಕರಾದ ಯಾಜಕರು ಸರ್ವೇಶ್ವರನ ಆಲಯಕ್ಕೆ ತರಲಾದ ಹಣವನ್ನೆಲ್ಲಾ ಅದರಲ್ಲಿಯೇ ಹಾಕಿಸುತ್ತಿದ್ದರು.</verse>
				<verse number="10">ಪೆಟ್ಟಿಗೆಯಲ್ಲಿ ತಕ್ಕಷ್ಟು ಹಣಕೂಡಿದೆಯೆಂದು ಕಂಡುಬಂದಾಗೆಲ್ಲಾ, ರಾಜಲೇಖಕನು ಹಾಗು ಮಹಾಯಾಜಕನು ಬಂದು ಅದನ್ನು ಚೀಲಗಳಲ್ಲಿ ಹಾಕಿ, ತೂಕಮಾಡಿ, ಸರ್ವೇಶ್ವರನ ಆಲಯದ ಹಣವು ಇಷ್ಟಿಷ್ಟು ಆಯಿತೆಂದು ಬರೆದುಕೊಂಡು,</verse>
				<verse number="11">ಅದನ್ನು ಆಲಯದ ಕೆಲಸವನ್ನು ನಡಿಸುವ ಮೇಸ್ತ್ರಿಗಳಿಗೆ ಒಪ್ಪಿಸುತ್ತಿದ್ದರು; ಇವರು ಅದನ್ನು ಅಲ್ಲಿ ಕೆಲಸಮಾಡುವ ಬಡಗಿ, ಶಿಲ್ಪಿ, ಉಪ್ಪಾರ, ಕಲ್ಲುಕುಟಿಕ ಅವರ ಸಂಬಳಕ್ಕಾಗಿಯೂ</verse>
				<verse number="12">ಮರ, ಕೆತ್ತಿದ ಕಲ್ಲು, ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಉಪಯೋಗಿಸುತ್ತಿದ್ದರು.</verse>
				<verse number="13">ಸರ್ವೇಶ್ವರನ ಆಲಯಕ್ಕೆ ತರಲಾದ ಹಣವನ್ನು ದುರಸ್ತುಕಾರ್ಯದವರ ಸಂಬಳಕ್ಕಾಗಿ ಉಪಯೋಗಿಸಿದರೇ ಹೊರತು,</verse>
				<verse number="14">ಸರ್ವೇಶ್ವರನ ಆಲಯದ ಬೆಳ್ಳಿ ಬಟ್ಟಲು, ಕತ್ತರಿ, ಬೋಗುಣಿ, ತುತೂರಿ, ಬೆಳ್ಳಿ, ಬಂಗಾರದ ಪಾತ್ರೆ, ಇವುಗಳನ್ನು ಮಾಡುವುದಕ್ಕಾಗಿ ಉಪಯೋಗಿಸಲಿಲ್ಲ.</verse>
				<verse number="15">ಕೆಲಸಗಾರರಿಗೆ ಸಂಬಳಕೊಡುವ ಮೇಸ್ತ್ರಿಗಳು ನಂಬಿಕಸ್ತರಾಗಿದ್ದುದರಿಂದ ಅವರ ವಶಕ್ಕೆ ಕೊಡಲಾದ ಹಣದ ಲೆಕ್ಕವನ್ನು ಯಾರೂ ಕೇಳಲಿಲ್ಲ.</verse>
				<verse number="16">ಅಪರಾಧಪ್ರಾಯಶ್ಚಿತ್ತಕ್ಕಾಗಿ ಹಾಗು ದೋಷಪರಿಹಾರಕ್ಕಾಗಿ ತರಲಾದ ಹಣ ಯಾಜಕರ ಭಾಗವಾಗಿತ್ತು. ಅದು ಸರ್ವೇಶ್ವರನ ಆಲಯಕ್ಕೆ ಸೇರುತ್ತಿರಲಿಲ್ಲ.</verse>
				<verse number="17">ಇದೇ ಕಾಲದಲ್ಲಿ ಸಿರಿಯಾದವರ ಅರಸನಾದ ಹಜಾಯೇಲನು ಬಂದು ಗತ್ ಊರಿಗೆ ಮುತ್ತಿಗೆಹಾಕಿ ಅದನ್ನು ಸ್ವಾಧೀನಪಡಿಸಿಕೊಂಡು ಅಲ್ಲಿಂದ ಜೆರುಸಲೇಮಿಗೆ ದಾಳಿಯಿಡಲು ಹೊರಟನು.</verse>
				<verse number="18">ಜುದೇಯದ ಅರಸ ಯೆಹೋವಾಷನು ಇದನ್ನು ಕೇಳಿ, ತಾನು ಮತ್ತು ತನ್ನ ಪೂರ್ವಿಕರಾದ ಯೆಹೋಷಾಫಾಟ್, ಯೆಹೋರಾಮ್, ಅಹಜ್ಯಾ ಎಂಬ ಯೆಹೂದರಾಜರು ದೇವಸ್ಥಾನಕ್ಕೆ ಕಾಣಿಕೆಯಾಗಿ ಕೊಟ್ಟ ಒಡವೆಗಳನ್ನು ಹಾಗು ಸರ್ವೇಶ್ವರನ ಆಲಯದ ಮತ್ತು ಅರಮನೆ ಭಂಡಾರಗಳಲ್ಲಿ ಇದ್ದ ಬಂಗಾರದ ವಸ್ತುಗಳನ್ನು ಸಿರಿಯಾದವರ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಜೆರುಸಲೇಮನ್ನು ಬಿಟ್ಟುಹೋದನು.</verse>
				<verse number="19">ಯೆಹೋವಾಷನ ಉಳಿದ ಚರಿತ್ರೆ ಹಾಗು ಅವನ ಕಾರ್ಯಕಲಾಪಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.</verse>
				<verse number="20">ಯೆಹೋವಾಷನ ಉದ್ಯೋಗಸ್ಥರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿದರು.</verse>
				<verse number="21">ಅವರಲ್ಲಿ ಶಿಮೆಯಾತನ ಮಗ ಯೋಜಾಕಾರ್, ಶೋಮೇರನ ಮಗ ಯೆಹೋಜಾಬಾದ್ ಎಂಬವರು ಸಿಲ್ಲಾ ಊರಿಗೆ ಹೋಗುವ ಗುಟ್ಟಾದ ದಾರಿಯಲ್ಲಿರುವ ಮಿಲ್ಲೋಕೋಟೆಯಲ್ಲಿ ಅವನನ್ನು ಕೊಂದರು. ಅವನ ಜನರು ಅವನ ಶವವನ್ನು ದಾವೀದನಗರದೊಳಗೆ ಅವನ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಅಮಚ್ಯನು ಅರಸನಾದನು.</verse>
			</chapter>
			<chapter number="13">
				<verse number="1">ಜುದೇಯದ ಅರಸನೂ ಅಹಜ್ಯನ ಮಗನೂ ಆದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದಲ್ಲಿ, ಯೇಹುವಿನ ಮಗ ಯೆಹೋವಾಹಾಜನು, ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಹದಿನೇಳು ವರ್ಷ ಆಳಿದನು.</verse>
				<verse number="2">ಅವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗವನ್ನು ಕೈಬಿಡದೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.</verse>
				<verse number="3">ಆದುದರಿಂದ ಸರ್ವೇಶ್ವರಸ್ವಾಮಿ ಇಸ್ರಯೇಲರ ಮೇಲೆ ಕೋಪಗೊಂಡು, ಅವರನ್ನು ಸಿರಿಯಾದವರ ಅರಸನಾದ ಹಜಾಯೇಲನ ಕೈಗೂ ಅವನ ಮಗನಾದ ಬೆನ್ಹದದನ ಕೈಗೂ ಒಪ್ಪಿಸಿದರು. ಇಸ್ರಯೇಲರು ಯೆಹೋವಾಹಾಜನ ಜೀವಮಾನದಲ್ಲೆಲ್ಲಾ ಸಿರಿಯಾದವರ ಕೈಕೆಳಗಿದ್ದರು.</verse>
				<verse number="4">ಯೆಹೋವಾಹಾಜನು ಸರ್ವೇಶ್ವರನಿಗೆ ಮೊರೆ ಇಟ್ಟನು. ಅವರು ಅವನ ಮೊರೆಗೆ ಓಗೊಟ್ಟು, ಸಿರಿಯಾದವರ ಅರಸನಿಂದ ಬಹಳವಾಗಿ ಶೋಷಿತರಾದ ಇಸ್ರಯೇಲರ ಮೇಲೆ ಕಟಾಕ್ಷವಿಟ್ಟು, ಅವರಿಗೆ ಒಬ್ಬ ವಿಮೋಚಕನನ್ನು ಅನುಗ್ರಹಿಸಿದರು.</verse>
				<verse number="5">ಅವನ ಮುಖಾಂತರವಾಗಿ ಅವರು ಸಿರಿಯಾದವರ ಕೈಯಿಂದ ಬಿಡುಗಡೆಯಾಗಿ, ಮುಂದಿನಂತೆ ತಮ್ಮ ತಮ್ಮ ಮನೆಗಳಲ್ಲಿ ಸುರಕ್ಷಿತರಾಗಿ ವಾಸಿಸುವವರಾದರು.</verse>
				<verse number="6">ಆದರೂ ಅವರು ತಮ್ಮನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮನೆಯವರ ದುರ್ಮಾರ್ಗದಲ್ಲಿ ನಡೆದರು. ಅದನ್ನು ಬಿಡಲೇ ಇಲ್ಲ. ಸಮಾರಿಯದಲ್ಲಿ ಅಶೇರ ವಿಗ್ರಹಸ್ಥಂಭವು ಇನ್ನೂ ಉಳಿದಿತ್ತು.</verse>
				<verse number="7">ಯೆಹೋವಾಹಾಜನಿಗೆ ಐವತ್ತುಮಂದಿ ರಾಹುತರು, ಹತ್ತು ರಥಗಳು, ಹತ್ತುಸಾವಿರ ಮಂದಿ ಕಾಲಾಳುಗಳು ಮಾತ್ರ ಉಳಿದಿದ್ದರು. ಸಿರಿಯಾದವರ ಅರಸನು ಬೇರೆ ಎಲ್ಲರನ್ನೂ ಸಂಹರಿಸಿ, ಕಣದ ಧೂಳಿಪಟದಂತೆ ಮಾಡಿಬಿಟ್ಟನು.</verse>
				<verse number="8">ಯೆಹೋವಾಹಾಜನ ಉಳಿದ ಚರಿತ್ರೆ ಹಾಗು ಅವನ ಶೂರಕೃತ್ಯಗಳ ವಿವರ ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.</verse>
				<verse number="9">ಅವನು ನಿಧನನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಸಮಾರಿಯದಲ್ಲಿ ಸಮಾಧಿ ಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಯೋವಾಷನು ಅರಸನಾದನು.</verse>
				<verse number="10">ಜುದೇಯದ ಅರಸನಾದ ಯೆಹೋವಾಷಾನ ಆಳ್ವಿಕೆಯ ಮೂವತ್ತೇಳನೆಯ ವರ್ಷದಲ್ಲಿ ಯೆಹೋವಾಹಾಜನ ಮಗ ಯೋವಾಷನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಹದಿನಾರು ವರ್ಷ ಆಳಿದನು.</verse>
				<verse number="11">ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.</verse>
				<verse number="12">ಇವನ ಉಳಿದ ಚರಿತ್ರೆ, ಶೂರಕೃತ್ಯಗಳ ಹಾಗು ಇವನು ಯೆಹೂದ್ಯರ ಅರಸನಾದ ಅಮಚ್ಯನು ಎಂಬವನೊಡನೆ ನಡೆಸಿದ ಯುದ್ಧದ ವಿವರವು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.</verse>
				<verse number="13">ಇವನು ನಿಧನನಾಗಿ ಪಿತೃಗಳ ಬಳಿ ಸೇರಲು ಇವನ ಶವವನ್ನು ಸಮಾರಿಯದೊಳಗೆ ಇಸ್ರಯೇಲ್ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು. ಇವನ ತರುವಾಯ ಯಾರೊಬ್ಬಾಮನು ಸಿಂಹಾಸನವನ್ನೇರಿದನು.</verse>
				<verse number="14">ಎಲೀಷನು ಮಾರಕರೋಗದಿಂದ ನರಳುತ್ತಿದ್ದನು. ಇಸ್ರಯೇಲರ ಅರಸ ಯೋವಾಷನು ಇದನ್ನು ಕೇಳಿ ಅವನ ಬಳಿಗೆ ಹೋಗಿ, “ತಂದೆಯೇ, ನನ್ನ ತಂದೆಯೇ, ಇಸ್ರಯೇಲರಿಗೆ ರಥಾರಥಾಶ್ವಬಲಗಳಾಗಿ ಇದ್ದವರೇ,” ಎಂದು ಗೋಳಿಡುತ್ತಾ ಅಧೋಮುಖನಾಗಿ ಬಿದ್ದು ಅತ್ತು ಪ್ರಲಾಪಿಸಿದನು.</verse>
				<verse number="15">ಆಗ ಎಲೀಷನು ಇಸ್ರಯೇಲರ ಅರಸನಿಗೆ, “ಬಿಲ್ಲನ್ನೂ ಬಾಣಗಳನ್ನೂ ತರಿಸಿ,” ಎಂದು ಹೇಳಿದನು; ಅವನು ತರಿಸಿದನು.</verse>
				<verse number="16">ಆಗ, “ಬಿಲ್ಲನ್ನು ಹಿಡಿದುಕೋ,” ಎಂದು ಆಜ್ಞಾಪಿಸಿದನು. ಅವನು ಹಿಡಿದುಕೊಳ್ಳಲು ತನ್ನ ಕೈಯನ್ನು ಅವನ ಕೈ ಮೇಲೆ ಇಟ್ಟು,</verse>
				<verse number="17">“ಪೂರ್ವದಿಕ್ಕಿಗಿರುವ ಕಿಟಕಿಯನ್ನು ತೆರೆ,” ಎಂದನು. ಅವನು ತೆರೆದನು. ಅನಂತರ, “ಬಾಣವನ್ನೆಸೆ,” ಎಂದು ಆಜ್ಞಾಪಿಸಿದನು. ಅವನು ಎಸೆಯಲು, “ಇದು ಜಯಪ್ರದವಾದ ಸರ್ವೇಶ್ವರನ ಬಾಣ; ಸಿರಿಯಾದವರನ್ನು ಜಯಿಸುವ ಬಾಣ. ಆ ಸಿರಿಯಾದವರನ್ನು ನೀನು ಅಫೇಕದಲ್ಲಿ ಸೋಲಿಸಿ ಸಂಹರಿಸಿಬಿಡುವೆ,” ಎಂದು ಹೇಳಿದನು.</verse>
				<verse number="18">ಇದಲ್ಲದೆ, ಎಲೀಷನು ಇಸ್ರಯೇಲರ ಅರಸನಿಗೆ, “ಬಾಣಗಳನ್ನು ತೆಗೆದುಕೋ,” ಎಂದು ಆಜ್ಞಾಪಿಸಿದಾಗ ಅವನು ತೆಗೆದುಕೊಳ್ಳಲು, “ಇವುಗಳಿಂದ ನೆಲವನ್ನು ಸೀಳು,” ಎಂದನು. ಅವನು ಮೂರು ಸಾರಿ ಬಾಣಬಿಟ್ಟು ಸುಮ್ಮನೆ ನಿಂತನು.</verse>
				<verse number="19">ಆಗ ದೈವಪುರುಷನು ಅವನ ಮೇಲೆ ಸಿಟ್ಟುಗೊಂಡು, “ನೀನು ಐದಾರು ಸಾರಿ ಬಾಣಬಿಡಬೇಕಾಗಿತ್ತು. ಹಾಗೆ ಮಾಡಿದ್ದರೆ ಸಿರಿಯಾದವರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯ ದೊರಕುತ್ತಿತ್ತು. ನೀನು ಮೂರು ಸಾರಿ ಮಾತ್ರ ಬಾಣಬಿಟ್ಟದ್ದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವೆ,” ಎಂದು ಹೇಳಿದನು.</verse>
				<verse number="20">ಎಲೀಷನು ಮೃತನಾದನು. ಅವನ ಶವವನ್ನು ಸಮಾಧಿಮಾಡಿದರು. ಮೋವಾಬ್ಯರು ಪ್ರತಿವರ್ಷದ ಪ್ರಾರಂಭದಲ್ಲಿ ಸುಲಿಗೆಮಾಡುವುದಕ್ಕಾಗಿ ಗುಂಪುಗುಂಪಾಗಿ ಬರುತ್ತಿದ್ದರು.</verse>
				<verse number="21">ಒಂದು ದಿನ, ಜನರು ಒಬ್ಬ ಸತ್ತವನನ್ನು ಸಮಾಧಿ ಮಾಡುವುದಕ್ಕೆ ಹೋದಾಗ, ಮೋವಾಬ್ಯರ ಗುಂಪು ಬರುತ್ತಿರುವುದನ್ನು ಕಂಡು, ಶವವನ್ನು ಎಲೀಷನ ಸಮಾಧಿಯಲ್ಲೆ ಬಿಸಾಡಿ ಓಡಿಹೋದರು. ಸತ್ತ ವ್ಯಕ್ತಿಯ ಶವ ಎಲೀಷನ ಎಲುಬುಗಳಿಗೆ ತಗುಲಿದ ಕೂಡಲೆ, ಆ ವ್ಯಕ್ತಿ ಉಜ್ಜೀವಿಸಿ ಎದ್ದುನಿಂತನು.</verse>
				<verse number="22">ಸಿರಿಯಾದವರ ಅರಸನಾದ ಹಜಾಯೇಲನು ಯೆಹೋವಾಹಾಜನ ಆಳ್ವಿಕೆಯಲ್ಲೆಲ್ಲಾ ಇಸ್ರಯೇಲರನ್ನು ಪೀಡಿಸುತ್ತಿದ್ದನು.</verse>
				<verse number="23">ಆದರೂ ಸರ್ವೇಶ್ವರ ಅವರನ್ನು ಸಂಪೂರ್ಣವಾಗಿ ಹಾಳುಮಾಡಗೊಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತಮ್ಮ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾವು ಅಬ್ರಹಾಮ್, ಇಸಾಕ್, ಯಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿ, ಅವರಿಗೆ ದಯೆತೋರಿಸಿದರು; ಕರುಳುಕರಗಿದವರಾಗಿ ಅವರಿಗೆ ಪ್ರಸನ್ನರಾದರು.</verse>
				<verse number="24">ಸಿರಿಯಾದವರ ಅರಸನಾದ ಹಜಾಯೇಲನು ಮರಣಹೊಂದಲು ಅವನಿಗೆ ಬದಲಾಗಿ ಅವನ ಮಗ ಬೆನ್ಹದದನು ಅರಸನಾದನು.</verse>
				<verse number="25">ಯೆಹೋವಾಹಾಜನ ಮಗ ಯೋವಾಷನು, ತನ್ನ ತಂದೆಯ ಕಾಲದಲ್ಲಿ ಹಜಾಯೇಲನು ಯುದ್ಧಮಾಡಿ ಕಿತ್ತುಕೊಂಡಿದ್ದ ಪಟ್ಟಣಗಳನ್ನು, ಬೆನ್ಹದದನಿಂದ ತಿರುಗಿ ತೆಗೆದುಕೊಂಡನು. ಅವನನ್ನು ಮೂರು ಸಾರಿ ಸೋಲಿಸಿ, ಇಸ್ರಯೇಲರ ಎಲ್ಲಾ ಪಟ್ಟಣಗಳನ್ನು ಹಿಂದಕ್ಕೆ ಪಡೆದನು.</verse>
			</chapter>
			<chapter number="14">
				<verse number="1">ಇಸ್ರಯೇಲರ ಅರಸನಾದ ಯೆಹೋವಾಹಾಜನ ಮಗ ಯೋವಾಷನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಜುದೇಯದ ಅರಸನಾದ ಯೆಹೋವಾಷನ ಮಗ ಅಮಚ್ಯ ಎಂಬವನು ಅರಸನಾದನು.</verse>
				<verse number="2">ಪಟ್ಟಕ್ಕೆ ಬಂದಾಗ ಇವನಿಗೆ ಇಪ್ಪತ್ತೈದು ವರ್ಷ ವಯಸ್ಸು. ಇವನು ಜೆರುಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಜೆರುಸಲೇಮಿನವಳಾದ ಯೆಹೋವದ್ದೀನ್ ಎಂಬಾಕೆ ಇವನ ತಾಯಿ.</verse>
				<verse number="3">ಇವನು ತನ್ನ ತಂದೆ ಯೆಹೋವಾಷನ ಸನ್ಮಾರ್ಗದಲ್ಲಿ ತಪ್ಪದೆ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾದನು. ಆದರೂ ತನ್ನ ಪೂರ್ವಜ ದಾವೀದನಷ್ಟು ಉತ್ತಮನಾಗಿರಲಿಲ್ಲ.</verse>
				<verse number="4">ಇವನ ಕಾಲದಲ್ಲೂ ಪೂಜಾಸ್ಥಳಗಳು ಹಾಗೆಯೇ ಇದ್ದವು. ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.</verse>
				<verse number="5">ಇವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೆ ತನ್ನ ತಂದೆಯನ್ನು ಕೊಂದ ಉದ್ಯೋಗಸ್ಥರಿಗೆ ಮರಣ ವಿಧಿಸಿದನು.</verse>
				<verse number="6">ಆದರೆ, “ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆ ಮಾಡಿದ ಪಾಪದ ನಿಮಿತ್ತ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪಫಲವನ್ನು ತಾನೇ ಅನುಭವಿಸಬೇಕು,” ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಸರ್ವೇಶ್ವರನ ಆಜ್ಞೆಯನ್ನು ನೆನಪುಮಾಡಿಕೊಂಡು ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.</verse>
				<verse number="7">ಇದಲ್ಲದೆ, ಉಪ್ಪಿನ ಕಣಿವೆಯಲ್ಲಿ ಎದೋಮ್ಯರ ಹತ್ತು ಸಾವಿರ ಮಂದಿ ಸೈನಿಕರನ್ನು ಸದೆಬಡಿದು ಅವರಿಂದ ‘ಸೆಲ’ ದುರ್ಗವನ್ನು ಕಿತ್ತುಕೊಂಡು ಅದಕ್ಕೆ ಯೊಕ್ತೆಯೇಲ್ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ.</verse>
				<verse number="8">ಅನಂತರ ಅಮಚ್ಯನು ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಇಸ್ರಯೇಲರ ಅರಸನೂ ಆದ ಯೋವಾಷನ ಬಳಿಗೆ ದೂತರನ್ನು ಕಳುಹಿಸಿದನು. ಅವನಿಗೆ, “ನಾವು ಒಬ್ಬರನ್ನೊಬ್ಬರು ಎದುರುಗೊಳ್ಳೋಣ ಬಾ,” ಎಂದು ಹೇಳಿಸಿದನು.</verse>
				<verse number="9">ಆಗ ಇಸ್ರಯೇಲರ ಅರಸನಾದ ಯೋವಾಷ ಜುದೇಯದ ಅರಸನಾದ ಅಮಚ್ಯನಿಗೆ, “ಲೆಬನೋನಿನ ಮುಳ್ಳುಗಿಡವು ಅಲ್ಲಿನ ದೇವದಾರು ಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು,’ ಎಂದು ಹೇಳಿಕಳುಹಿಸಿತು. ತುಸು ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡುಮೃಗ ಅಲ್ಲಿಂದ ಹಾದುಹೋಗುತ್ತಿರುವಾಗ ಆ ಮುಳ್ಳುಗಿಡವನ್ನು ತುಳಿದುಬಿಟ್ಟಿತು.</verse>
				<verse number="10">ನೀನು ಎದೋಮ್ಯರನ್ನು ಸೋಲಿಸಿದ್ದರಿಂದ ಬಹಳವಾಗಿ ಉಬ್ಬಿಕೊಂಡಿರುವೆ; ಆ ಕೀರ್ತಿ ಸಾಕೆಂದು ನೆನಸಿ ಸುಮ್ಮನೆ ಮನೆಯಲ್ಲೇ ಕುಳಿತುಕೋ. ನನ್ನನ್ನು ಕೆಣಕಿ ನಿನ್ನ ಮೇಲೆಯೂ ನಿನ್ನ ರಾಜ್ಯದ ಮೇಲೆಯೂ ಏಕೆ ಕೇಡನ್ನು ಬರಮಾಡಿಕೊಳ್ಳುವೆ?” ಎಂದು ಉತ್ತರಕೊಟ್ಟು ಕಳುಹಿಸಿದನು.</verse>
				<verse number="11">ಅಮಚ್ಯನು ಇದನ್ನು ಲಕ್ಷಿಸಲಿಲ್ಲವಾದುದರಿಂದ ಇಸ್ರಯೇಲರ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು; ಅವರು ಜುದೇಯ ಪ್ರಾಂತ್ಯದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.</verse>
				<verse number="12">ಯೆಹೂದ್ಯರು ಇಸ್ರಯೇಲರಿಂದ ಸೋಲು ಸವಿದು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.</verse>
				<verse number="13">ಇಸ್ರಯೇಲರ ಅರಸ ಯೋವಾಷನು, ಅಹಜ್ಯನ ಮೊಮ್ಮಗನೂ ಯೆಹೋವಾಷನ ಮಗನೂ ಜುದೇಯದ ಅರಸನೂ ಆದ ಅಮತ್ಯನನ್ನು, ಬೇತ್ಷೆಮೆಷಿನಲ್ಲಿ ಹಿಡಿದು, ಅವನನ್ನು ಜೆರುಸಲೇಮಿಗೆ ಕರೆದುಕೊಂಡುಬಂದು, ಎಫ್ರಯಿಮ್ ಬಾಗಿಲಿಗೂ ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಜೆರುಸಲೇಮಿನ ನಾನೂರು ಮೊಳ ಗೋಡೆಯನ್ನು ಕೆಡವಿಬಿಟ್ಟನು.</verse>
				<verse number="14">ಇದಲ್ಲದೆ, ಅವನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಸಿಕ್ಕಿದ ಎಲ್ಲಾ ಬೆಳ್ಳಿ ಬಂಗಾರವನ್ನೂ ಪಾತ್ರೆಗಳನ್ನೂ ತೆಗೆದುಕೊಂಡು, ಕೆಲವರನ್ನು ಒತ್ತೆಯಾಳುಗಳಾಗಿ ಸೆರೆಹಿಡಿದು, ಸಮಾರಿಯಕ್ಕೆ ಹಿಂದಿರುಗಿದನು.</verse>
				<verse number="15">ಯೋವಾಷನ ಉಳಿದ ಚರಿತ್ರೆ, ಅವನ ಶೂರಕೃತ್ಯಗಳ ಮತ್ತು ಜುದೇಯದ ರಾಜನಾದ ಅಮಚ್ಯನೊಡನೆ ನಡೆಸಿದ ಯುದ್ಧದ ವಿವರ, ಇವು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.</verse>
				<verse number="16">ಅವನು ನಿಧನನಾಗಿ ಪಿತೃಗಳ ಬಳಿ ಸೇರಲು ಅವನ ಶವವನ್ನು ಸಮಾರಿಯದೊಳಗೆ ಇಸ್ರಯೇಲರ ರಾಜಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಯಾರೊಬ್ಬಾಮನು ಅರಸನಾದನು.</verse>
				<verse number="17">ಇಸ್ರಯೇಲರ ಅರಸನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತನಂತರ, ಜುದೇಯದ ಅರಸನೂ ಯೆಹೋವಾಷನ ಮಗನೂ ಆದ ಅಮಚ್ಯನು ಇನ್ನೂ ಹದಿನೈದು ವರ್ಷ ಬದುಕಿದ್ದನು.</verse>
				<verse number="18">ಅವನ ಉಳಿದ ಚರಿತ್ರೆ ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.</verse>
				<verse number="19">ಜೆರುಸಲೇಮಿನವರು ಅವನಿಗೆ ವಿರುದ್ಧ ಒಳಸಂಚು ಮಾಡಿದ್ದರಿಂದ ಅವನು ಲಾಕೀಷಿಗೆ ಓಡಿಹೋದನು; ಆದರೆ ಅವರು ಅಲ್ಲಿಗೆ ಆಳುಗಳನ್ನು ಕಳುಹಿಸಿ ಅವನನ್ನು ಕೊಲ್ಲಿಸಿದರು.</verse>
				<verse number="20">ಅವನ ಜನರು ಅವನ ಶವವನ್ನು ಕುದುರೆಗಳ ಮೇಲೆ ಜೆರುಸಲೇಮಿಗೆ ತಂದು ದಾವೀದ ನಗರದೊಳಗೆ ಅವನ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.</verse>
				<verse number="21">ಅನಂತರ ಎಲ್ಲಾ ಯೆಹೂದ್ಯರು ಕೂಡಿ ಹದಿನಾರು ವರ್ಷದವನಾದ ಅಜರ್ಯನನ್ನು ಅವನ ತಂದೆ ಅಮಚ್ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.</verse>
				<verse number="22">ಅರಸನು ಮೃತನಾಗಿ ಪಿತೃಗಳ ಬಳಿ ಸೇರಿದ ಮೇಲೆ, ಇವನು ಏಲತ್ ಎಂಬ ಪಟ್ಟಣವನ್ನು ಮತ್ತೆ ಜುದೇಯ ರಾಜ್ಯಕ್ಕೆ ಸೇರಿಸಿ, ಭದ್ರಪಡಿಸಿದನು.</verse>
				<verse number="23">ಜುದೇಯದ ಅರಸನೂ ಯೆಹೋವಾಷನ ಮಗನೂ ಆದ ಅಮಚ್ಯನ ಆಳ್ವಿಕೆಯ ಹದಿನೈದನೆಯ ವರ್ಷದಲ್ಲಿ, ಇಸ್ರಯೇಲರ ಅರಸನಾದ ಯೋವಾಷನ ಮಗ ಯಾರೊಬ್ಬಾಮನು, ಅರಸನಾಗಿ ಸಮಾರಿಯದಲ್ಲಿ ನಾಲ್ವತ್ತೊಂದು ವರ್ಷ ಆಳಿದನು.</verse>
				<verse number="24">ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.</verse>
				<verse number="25">ಇಸ್ರಯೇಲ್ ದೇವರಾದ ಸರ್ವೇಶ್ವರ, ತನ್ನ ಸೇವಕನೂ ಗತ್ ಹೇಫೆರಿವನಾದ ಅಮಿತ್ತೈಯ ಮಗನೂ ಆದ ಯೋನಾ ಎಂಬ ಪ್ರವಾದಿಯ ಮುಖಾಂತರ ಮುಂತಿಳಿಸಿದಂತೆ, ಹಮಾತಿನ ದಾರಿಯಿಂದ ಅರಾಬಾ ತಗ್ಗಿನ ಸಮುದ್ರದವರೆಗಿದ್ದ ಇಸ್ರಯೇಲರ ಮೇರೆಯನ್ನು ತಿರುಗಿ ತೆಗೆದುಕೊಂಡವನು ಇವನೇ.</verse>
				<verse number="26">“ಇಸ್ರಯೇಲರು ಘೋರಕಷ್ಟವನ್ನು ಅನುಭವಿಸುತ್ತಿರುತ್ತಾರೆ. ಅವರಲ್ಲಿದ್ದ ಸ್ವತಂತ್ರರೂ ಪರತಂತ್ರರೂ ನಾಶವಾಗಿದ್ದಾರೆ, ಅವರನ್ನು ರಕ್ಷಿಸುವವನು ಒಬ್ಬನೂ ಇಲ್ಲ,” ಎಂಬುದನ್ನು ಸರ್ವೇಶ್ವರ ನೋಡಿದರು.</verse>
				<verse number="27">ಆ ಜನರನ್ನು ಭೂಲೋಕದಿಂದ ನಿರ್ನಾಮಮಾಡುವುದಕ್ಕೆ ಮನಸ್ಸಿಲ್ಲದೆ, ಯೋವಾಷನ ಮಗ ಯಾರೊಬ್ಬಾಮನ ಮುಖಾಂತರ ಅವರನ್ನು ರಕ್ಷಿಸಿದರು.</verse>
				<verse number="28">ಯಾರೊಬ್ಬಾಮನ ಉಳಿದ ಚರಿತ್ರೆ, ಅವನು ಯುದ್ಧದಲ್ಲಿ ನಡೆಸಿದ ಶೂರಕಾರ್ಯ ಮತ್ತು ಮೊದಲು ಯೆಹೂದ್ಯರ ಸ್ವಾಧೀನದಲ್ಲಿದ್ದ ದಮಸ್ಕ, ಹಮಾತ್ ಎಂಬ ಪಟ್ಟಣಗಳು ಇವನಿಂದ ಇಸ್ರಯೇಲ್ ರಾಜ್ಯಕ್ಕೆ ವಶವಾದ ವಿವರ, ಇವೆಲ್ಲವು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.</verse>
				<verse number="29">ಅವನು ನಿಧನನಾಗಿ ಇಸ್ರಯೇಲ್ ರಾಜರಾಗಿದ್ದ ತನ್ನ ಪಿತೃಗಳ ಬಳಿ ಸೇರಿದನು. ಅವನ ಸ್ಥಾನದಲ್ಲಿ ಅವನ ಮಗ ಜೆಕರ್ಯನು ಅರಸನಾದನು.</verse>
			</chapter>
			<chapter number="15">
				<verse number="1">ಇಸ್ರಯೇಲರ ಅರಸ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಅಮಚ್ಯನ ಮಗ ಅಜರ್ಯನು ಜುದೇಯದ ಅರಸನಾದನು.</verse>
				<verse number="2">ಪಟ್ಟಕ್ಕೆ ಬಂದಾಗ ಇವನಿಗೆ ಹದಿನಾರು ವರ್ಷ ವಯಸ್ಸು. ಆ ಜೆರುಸಲೇಮಿನಲ್ಲಿ ಐವತ್ತೆರಡು ವರ್ಷ ಆಳಿದನು. ಜೆರುಸಲೇಮಿನವಳಾದ ಯೆಕೊಲ್ಯ ಎಂಬಾಕೆ ಇವನ ತಾಯಿ.</verse>
				<verse number="3">ಇವನು ತನ್ನ ತಂದೆಯಾದ ಅಮಚ್ಯನಂತೆ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.</verse>
				<verse number="4">ಆದರೆ ಇವನ ಕಾಲದಲ್ಲಿಯೂ ಪೂಜಾಸ್ಥಳಗಳು ಹಾಗೆಯೇ ಉಳಿದಿದ್ದವು. ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.</verse>
				<verse number="5">ಸರ್ವೇಶ್ವರಸ್ವಾಮಿ ಇವನನ್ನು ಕುಷ್ಠರೋಗದಿಂದ ಶಿಕ್ಷಿಸಿದರು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು. ರಾಜಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಇವನ ಮಗ ಯೋತಾಮನು ನೋಡಿಕೊಳ್ಳುತ್ತಿದ್ದನು.</verse>
				<verse number="6">ಅಜರ್ಯನ ಉಳಿದ ಚರಿತ್ರೆ ಹಾಗು ಅವನ ಕಾರ್ಯಕಲಾಪಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.</verse>
				<verse number="7">ಅವನು ಸತ್ತು ಪಿತೃಗಳ ಬಳಿ ಸೇರಿದಾಗ ಅವನ ಶವವನ್ನು ದಾವೀದನಗರದೊಳಗೆ ರಾಜಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಯೋತಾಮನು ಅರಸನಾದನು.</verse>
				<verse number="8">ಜುದೇಯದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಯಾರೊಬ್ಬಾಮನ ಮಗ ಜೆಕರ್ಯ ಎಂಬವನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಆರು ತಿಂಗಳು ಆಳಿದನು.</verse>
				<verse number="9">ಅವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.</verse>
				<verse number="10">ಯಾಬೇಷನ ಮಗ ಶಲ್ಲೂಮನು ಅವರಿಗೆ ವಿರುದ್ಧ ಒಳಸಂಚುಮಾಡಿ ಪ್ರಜೆಗಳ ಮುಂದೆಯೇ ಅವನನ್ನು ಕೊಂದು ಅವನಿಗೆ ಬದಲಾಗಿ ತಾನೇ ಅರಸನಾದನು.</verse>
				<verse number="11">ಜೆಕರ್ಯನ ಉಳಿದ ಚರಿತ್ರೆ ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.</verse>
				<verse number="12">ನಿನ್ನ ಸಂತಾನದವರು ನಾಲ್ಕನೆಯ ತಲೆಯವರೆಗೂ ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು ಎಂಬುದಾಗಿ ಯೇಹುವಿಗೆ ಸರ್ವೇಶ್ವರ ಮುಂತಿಳಿಸಿದ ಮಾತು ನೆರವೇರಿತು.</verse>
				<verse number="13">ಜುದೇಯದ ಅರಸ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗ ಶಲ್ಲೂಮನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಒಂದು ತಿಂಗಳು ಆಳಿದನು.</verse>
				<verse number="14">ಗಾದಿಯ ಮಗ ಮೆನಹೇಮನೆಂಬವನು ತಿರ್ಚದಿಂದ ಸಮಾರಿಯಕ್ಕೆ ಬಂದು ಅಲ್ಲಿದ್ದ ಯಾಬೇಷನ ಮಗ ಶಲ್ಲೂಮನನ್ನು ಕೊಂದು ಅವನ ಸ್ಥಾನದಲ್ಲಿ ತಾನೇ ಅರಸನಾದನು.</verse>
				<verse number="15">ಶಲ್ಲೂಮನ ಉಳಿದ ಚರಿತ್ರೆ ಹಾಗು ಅವನ ಒಳಸಂಚಿನ ವಿವರ ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.</verse>
				<verse number="16">ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ. ಆದುದರಿಂದ ಅವನು ಅದನ್ನೂ ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿದನು. ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಯರ ಹೊಟ್ಟೆ ಸೀಳಿಸಿದನು.</verse>
				<verse number="17">ಜುದೇಯದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಗಾದಿಯ ಮಗ ಮೆನಹೇಮನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಹತ್ತು ವರ್ಷ ಆಳಿದನು.</verse>
				<verse number="18">ಇವನು ಜೀವದಿಂದಿರುವವರೆಗೂ ಇಸ್ರಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.</verse>
				<verse number="19">ಅಸ್ಸೀರಿಯಾ ದೇಶದ ಅರಸನಾದ ಪೂಲನೆಂಬವನು ಇಸ್ರಯೇಲ್ ದೇಶಕ್ಕೆ ವಿರುದ್ಧ ದಾಳಿಯಿಟ್ಟಾಗ, ಮೆನಹೇಮನು ಅವನ ಮುಖಾಂತರ ತನ್ನ ಅರಸುತನವನ್ನು ದೃಢಪಡಿಸಿಕೊಳ್ಳುವುದಕ್ಕಾಗಿ, ಅವನಿಗೆ ಮೂವತ್ತನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು.</verse>
				<verse number="20">ಅಸ್ಸೀರಿಯದ ಅರಸನಿಗೆ ಆ ಹಣವನ್ನು ಕೊಡುವುದಕ್ಕಾಗಿ ಇಸ್ರಯೇಲರ ಪ್ರತಿಯೊಬ್ಬ ಐಶ್ವರ್ಯವಂತನಿಂದ ಐವತ್ತು ಬೆಳ್ಳಿ ನಾಣ್ಯಗಳನ್ನು ತೆಗೆದುಕೊಂಡನು. ಆ ಹಣ ಸಿಕ್ಕಿದ ನಂತರ ಅಸ್ಸೀರಿಯದ ಅರಸನು ಅಲ್ಲಿ ನಿಲ್ಲದೆ ಹಿಂದಿರುಗಿ ಹೋದನು.</verse>
				<verse number="21">ಮೆನಹೇಮನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.</verse>
				<verse number="22">ಅವನು ಮೃತನಾಗಿ ಪಿತೃಗಳ ಬಳಿ ಸೇರಿದನು. ಅವನ ಮಗ ಪೆಕಹ್ಯನು ಅರಸನಾದನು.</verse>
				<verse number="23">ಜುದೇಯದ ಅರಸ ಅಜರ್ಯನ ಆಳ್ವಿಕೆಯ ಐವತ್ತೆಂಟನೆಯ ವರ್ಷದಲ್ಲಿ ಮೆನಹೇಮನ ಮಗನಾದ ಪೆಕಹ್ಯ ಎಂಬವನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಎರಡು ವರ್ಷ ಆಳಿದನು.</verse>
				<verse number="24">ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.</verse>
				<verse number="25">ಇವನ ಸರದಾರನೂ ರೆಮಲ್ಯನ ಮಗನೂ ಆಗಿದ್ದ ಪೆಕಹ್ಯನು ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರುದ್ಧ ಒಳಸಂಚುಮಾಡಿ ಸಮಾರಿಯದಲ್ಲಿರುವ ಅರಮನೆಯ ಗರ್ಭಗೃಹದಲ್ಲೇ ಇವನನ್ನು ಮತ್ತು ಅರ್ಗೋಬ್, ಅರ್ಯೇ ಎಂಬವರನ್ನು ಕೊಂದು ಇವನಿಗೆ ಬದಲಾಗಿ ತಾನೇ ಅರಸನಾದನು.</verse>
				<verse number="26">ಪೆಕಹ್ಯನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.</verse>
				<verse number="27">ಜುದೇಯದ ಅರಸ ಅಜರ್ಯನ ಆಳ್ವಿಕೆಯ ಐವತ್ತೆರಡನೆಯ ವರ್ಷದಲ್ಲಿ ರೆಮಲ್ಯನ ಮಗನಾದ ಪೆಕಹ್ಯನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಇಪ್ಪತ್ತು ವರ್ಷ ಆಳಿದನು.</verse>
				<verse number="28">ಇವನು ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ, ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.</verse>
				<verse number="29">ಇಸ್ರಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಮತ್ತು ಗಿಲ್ಯಾದ್ ಹಾಗು ಗಲಿಲೇಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು, ಅವುಗಳ ನಿವಾಸಿಗಳನ್ನು ಅಸ್ಸೀರಿಯಾ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.</verse>
				<verse number="30">ಆಗ ಏಲನ ಮಗ ಹೋಶೇಯನು, ರೆಮಲ್ಯನ ಮಗ ಪೆಕಹನಿಗೆ ವಿರುದ್ಧ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು, ಇವನ ಸ್ಥಾನದಲ್ಲಿ ತಾನೇ ಅರಸನಾದನು.</verse>
				<verse number="31">ಪೆಕಹನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳನ್ನು ಇಸ್ರಯೇಲ್ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಓದಬಹುದು.</verse>
				<verse number="32">ಇಸ್ರಯೇಲರ ಅರಸನೂ ರೆಮಲ್ಯನ ಮಗನೂ ಆದ ಪೆಕಹನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಜುದೇಯದ ರಾಜನಾದ ಉಜ್ಜೀಯನ ಮಗ ಯೋತಾಮನು ಆಳತೊಡಗಿದನು.</verse>
				<verse number="33">ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಇವನು ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷಾ ಇವನ ತಾಯಿ.</verse>
				<verse number="34">ಇವನು ತನ್ನ ತಂದೆ ಉಜ್ಜೀಯನಂತೆ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು;</verse>
				<verse number="35">ಆದರೆ ಇವನ ಕಾಲದಲ್ಲೂ ಪೂಜಾಸ್ಥಳಗಳು ಇನ್ನು ಹಾಗೆಯೇ ಇದ್ದವು. ಆದುದರಿಂದ ಜನರು ಅವುಗಳಲ್ಲಿ ಬಲಿಗಳನ್ನೂ ಧೂಪಗಳನ್ನೂ ಸಮರ್ಪಿಸುತ್ತಿದ್ದರು. ಸರ್ವೇಶ್ವರನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿದವನು ಇವನೇ.</verse>
				<verse number="36">ಯೋತಾಮನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳು ಜುದೇಯದ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.</verse>
				<verse number="37">ಸರ್ವೇಶ್ವರ ಆ ಕಾಲದಲ್ಲಿ ಸಿರಿಯಾದ ಅರಸ ರೆಚೀನನನ್ನೂ ರೆಮಲ್ಯನ ಮಗ ಪೆಕಹನನ್ನೂ ಯೆಹೂದ್ಯರಿಗೆ ವಿರುದ್ಧ ಕಳುಹಿಸತೊಡಗಿದರು.</verse>
				<verse number="38">ಯೋತಾಮನು ಸತ್ತು ಪಿತೃಗಳ ಬಳಿ ಸೇರಲು ಅವನ ಶವವನ್ನು ಅವನ ಪೂರ್ವಜನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಅಹಾಜನು ಅರಸನಾದನು.</verse>
			</chapter>
			<chapter number="16">
				<verse number="1">ರೆಮಲ್ಯನ ಮಗ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಜುದೇಯದ ರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.</verse>
				<verse number="2">ಪಟ್ಟಕ್ಕೆ ಬಂದಾಗ ಇವನಿಗೆ ಇಪ್ಪತ್ತು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನು ತನ್ನ ದೇವರಾದ ಸರ್ವೇಶ್ವರಸ್ವಾಮಿಯ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಜ ದಾವೀದನ ಮಾರ್ಗವನ್ನು ಬಿಟ್ಟು</verse>
				<verse number="3">ಇಸ್ರಯೇಲ್ ರಾಜರ ಮಾರ್ಗದಲ್ಲೇ ನಡೆದನು; ಇದಲ್ಲದೆ ಇಸ್ರಯೇಲರ ನಾಡಿನಿಂದ ಸರ್ವೇಶ್ವರ ಓಡಿಸಿಬಿಟ್ಟ ಜನಾಂಗಗಳ ಅಸಹ್ಯ ಆಚಾರಗಳನ್ನು ಅನುಸರಿಸಿ ತನ್ನ ಮಗನನ್ನೆ ಬಲಿಯಗ್ನಿಪರೀಕ್ಷೆಗೆ ಗುರಿಮಾಡಿದನು.</verse>
				<verse number="4">ಪೂಜಾಸ್ಥಳಗಳಲ್ಲೂ ದಿಣ್ಣೆಗಳ ಮೇಲೂ ಎಲ್ಲಾ ಹಸಿರು ಮರಗಳ ಕೆಳಗೂ ಯಜ್ಞಧೂಪಗಳನ್ನು ಸಮರ್ಪಿಸಿದನು.</verse>
				<verse number="5">ಇವನ ಕಾಲದಲ್ಲಿ ಸಿರಿಯಾದವರ ಅರಸನಾದ ರೆಚೀನ್ ಮತ್ತು ಇಸ್ರಯೇಲರ ಅರಸನೂ ರೆಮಲ್ಯನ ಮಗನೂ ಆದ ಪೆಕಹ ಎಂಬವರು ಕೂಡಿಕೊಂಡು ಜೆರುಸಲೇಮಿಗೆ ವಿರುದ್ಧ ದಾಳಿಮಾಡಿ ಆಹಾಜನನ್ನು ಸುತ್ತಿಕೊಂಡರು. ಆದರೆ ಅವನನ್ನು ಜಯಿಸಲು ಅವರಿಂದ ಆಗಲಿಲ್ಲ.</verse>
				<verse number="6">ಇದೇ ಕಾಲದಲ್ಲಿ ಸಿರಿಯಾದವರ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಸಿರಿಯಾ ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಎದೋಮ್ಯರು ಬಂದು ಅಲ್ಲಿ ವಾಸಿಸಿದರು. ಇಂದಿನವರೆಗೂ ಅದರಲ್ಲಿ ಅವರೇ ವಾಸವಾಗಿದ್ದಾರೆ.</verse>
				<verse number="7">ಆಹಾಜನು ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪೆಲೆಸರನ ಬಳಿಗೆ ದೂತರನ್ನು ಕಳುಹಿಸಿ, “ನಾನು ನಿಮ್ಮ ಸೇವಕ ಹಾಗು ಕುವರ; ನೀವು ಬಂದು ನನ್ನನ್ನು, ನನಗೆ ವಿರುದ್ಧ ದಂಡೆತ್ತಿ ಬಂದಿರುವ ಸಿರಿಯಾದವರ ಮತ್ತು ಇಸ್ರಯೇಲರ ಅರಸುಗಳ ಕೈಗೆ ಸಿಕ್ಕದಂತೆ, ಕಾಪಾಡಿ,” ಎಂದು ಹೇಳಿಸಿದನು.</verse>
				<verse number="8">ಇದಲ್ಲದೆ ಆಹಾಜನು ಸರ್ವೇಶ್ವರನ ಆಲಯದಲ್ಲೂ ಅರಮನೆಯ ಭಂಡಾರದಲ್ಲೂ ಇದ್ದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ಅಸ್ಸೀರಿಯಾದ ಅರಸನಿಗೆ ಕಪ್ಪವಾಗಿ ಕಳುಹಿಸಿದನು.</verse>
				<verse number="9">ಅವನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ಮುತ್ತಿಗೆ ಹಾಕಿ, ರೆಚೀನನನ್ನು ಕೊಂದು, ನಿವಾಸಿಗಳನ್ನು ಸೆರೆಹಿಡಿದು ಕೀರ್ ಪ್ರಾಂತ್ಯಕ್ಕೆ ಒಯ್ದನು.</verse>
				<verse number="10">ಅರಸ ಆಹಾಜನು ಅಸ್ಸೀರಿಯದ ಅರಸ ತಿಗ್ಲತ್ಪಿಲೆಸರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು; ಅಲ್ಲಿದ್ದ ಬಲಿಪೀಠವನ್ನು ಕಂಡು ಅದರ ಒಂದು ಚಿತ್ರವನ್ನೂ ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ ಯಾಜಕ ಊರೀಯನಿಗೆ ಕಳುಹಿಸಿದನು.</verse>
				<verse number="11">ಅರಸ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ಪೂಜಾಪೀಠವನ್ನು ಮಾಡಿಸಿಬಿಟ್ಟಿದ್ದನು.</verse>
				<verse number="12">ಅರಸನು ಹಿಂದಿರುಗಿ ಬಂದ ಮೇಲೆ ಆ ಬಲಿಪೀಠವನ್ನು ಕಂಡು ಅದರ ಸಮೀಪಕ್ಕೆ ಹೋಗಿ</verse>
				<verse number="13">ತಾನು ತಂದ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನು ಸಮರ್ಪಿಸಿ ಶಾಂತಿಸಮಾಧಾನ ಬಲಿಗಾಗಿ ವಧಿಸಿದ ಪಶುಗಳ ರಕ್ತವನ್ನು ಅದರ ಮೇಲೆ ಚಿಮುಕಿಸಿದನು.</verse>
				<verse number="14">ಇದಲ್ಲದೆ, ಸರ್ವೇಶ್ವರನ ಆಲಯಕ್ಕೂ ತನ್ನ ಪೂಜಾಪೀಠಕ್ಕೂ ಮಧ್ಯೆ, ಆವರೆಗೂ ಸರ್ವೇಶ್ವರನ ಸೇವೆಗೆ ಉಪಯೋಗಿಸಲಾಗುತ್ತಿದ್ದ ತಾಮ್ರಪೀಠವನ್ನು ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಪೂಜಾಪೀಠದ ಉತ್ತರ ದಿಕ್ಕಿನಲ್ಲಿ ಇಡಿಸಿದನು.</verse>
				<verse number="15">ಯಾಜಕ ಊರೀಯನಿಗೆ, “ಪ್ರಾತಃಕಾಲದ ದಹನಬಲಿಯನ್ನು, ಸಾಯಂಕಾಲದ ನೈವೇದ್ಯವನ್ನು ಅರಸನು ತರುವ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಇವುಗಳನ್ನು ಮತ್ತು ಜನರು ತರುವ ದಹನಬಲಿ ದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನು ಈ ಮಹಾ ಪೂಜಾಪೀಠದ ಮೇಲೆ ಸಮರ್ಪಿಸಬೇಕು; ಮತ್ತು ದಹನಬಲಿ ಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ದೈವೋತ್ತರಗಳನ್ನು ತಿಳಿದುಕೊಳ್ಳುವುದಕ್ಕಾಗಿ ತಾಮ್ರಪೀಠವನ್ನು ಉಪಯೋಗಿಸುವೆನು,” ಎಂದು ಹೇಳಿದನು.</verse>
				<verse number="16">ಯಾಜಕ ಊರೀಯನು ಅರಸನು ಹೇಳಿದಂತೆಯೇ ಮಾಡಿದನು.</verse>
				<verse number="17">ಅರಸನಾದ ಆಹಾಜನು ಅಸ್ಸೀರಿಯದ ಅರಸನ ನಿಮಿತ್ತ ಪೀಠಗಳ ಪಟ್ಟಿಗಳನ್ನು ಕತ್ತರಿಸಿದನು; ಅವುಗಳ ಮೇಲಿದ್ದ ನೀರಿನ ತೊಟ್ಟಿಗಳನ್ನು ತೆಗೆದಿಟ್ಟನು; ಕಂಚಿನ ಕಡಲೆಂಬ ದೊಡ್ಡ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಿನಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು.</verse>
				<verse number="18">ಸರ್ವೇಶ್ವರನ ಆಲಯದ ಪ್ರಾಕಾರದೊಳಗೆ ಸಬ್ಬತ್ ದಿನದ ಆರಾಧನೆಗಾಗಿ ರಾಜರಿಗಾಗಿ ಕಟ್ಟಲಾಗಿದ್ದ ಮಂಟಪವನ್ನು ಹಾಗು ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದವನು ಈ ಆಹಾಜನೇ.</verse>
				<verse number="19">ಆಹಾಜನ ಉಳಿದ ಚರಿತ್ರೆ ಹಾಗು ಕೃತ್ಯಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.</verse>
				<verse number="20">ಅವನು ಸತ್ತು ಪಿತೃಗಳ ಬಳಿ ಸೇರಿದನು. ಅವನ ಶವವನ್ನು ದಾವೀದನಗರದೊಳಗೆ ಅವನ ಕುಟುಂಬ ಸ್ಮಶಾನದಲ್ಲಿ ಸಮಾಧಿ ಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಹಿಜ್ಕೀಯನು ಅರಸನಾದನು.</verse>
			</chapter>
			<chapter number="17">
				<verse number="1">ಜುದೇಯದ ಅರಸನಾದ ಆಹಾಜನ ಆಳ್ವಿಕೆಯ ಹನ್ನೆರಡನೆಯ ವರ್ಷದಲ್ಲಿ ಏಲನ ಮಗ ಹೋಶೇಯನು ಇಸ್ರಯೇಲರ ಅರಸನಾಗಿ ಸಮಾರಿಯದಲ್ಲಿ ಒಂಬತ್ತು ವರ್ಷ ಆಳಿದನು.</verse>
				<verse number="2">ಇವನು ತನ್ನ ಪೂರ್ವಿಕರಾದ ಇಸ್ರಯೇಲಿನ ಅರಸರಷ್ಟು ಕೆಟ್ಟವನಾಗಿರಲಿಲ್ಲ. ಆದರೂ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.</verse>
				<verse number="3">ಅಸ್ಸೀರಿಯದ ಅರಸ ಶಲ್ಮನೆಸರನು ಇವನಿಗೆ ವಿರುದ್ಧ ದಂಡೆತ್ತಿ ಬಂದಾಗ ಇವನು ಇವನಿಗೆ ಅಧೀನನಾಗಿ ಕಪ್ಪಕೊಡುವವನಾದನು.</verse>
				<verse number="4">ಕೆಲವು ವರ್ಷಗಳಾದನಂತರ, ಇವನು ಪ್ರತಿ ವರ್ಷವೂ ಕೊಡಬೇಕಾದ ಕಪ್ಪವನ್ನು ಕೊಡದೆಹೋದನು; ಅದು ಮಾತ್ರವಲ್ಲ, ಈಜಿಪ್ಟಿನ ಅರಸನಾದ ಸೋ ಎಂಬವನ ಬಳಿಗೆ ರಾಯಭಾರಿಗಳನ್ನು ಕಳುಹಿಸಿದ್ದನು. ಈ ಕಾರಣ ಅಸ್ಸೀರಿಯದ ಅರಸನು ಇವನನ್ನು ದ್ರೋಹಿಯೆಂದು ತಿಳಿದು, ಬಂಧಿಸಿ ಸೆರೆಯಲ್ಲಿಟ್ಟನು.</verse>
				<verse number="5">ಇದಲ್ಲದೆ, ಈ ಅಸ್ಸೀರಿಯದ ಅರಸನು ದೇಶವನ್ನೆಲ್ಲಾ ಸ್ವಾಧೀನಮಾಡಿಕೊಂಡು ಸಮಾರಿಯಕ್ಕೆ ಬಂದು ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆಹಾಕಿದನು.</verse>
				<verse number="6">ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.</verse>
				<verse number="7">ಇಸ್ರಯೇಲರ ಈ ದುರ್ಗತಿಗೆ ಅವರ ದುರ್ನಡತೆಯೇ ಕಾರಣ: ಹೇಗೆಂದರೆ, ಅವರು ತಮ್ಮನ್ನು ಈಜಿಪ್ಟಿನ ಅರಸನಾದ ಫರೋಹನ ಕೈಯಿಂದ ಬಿಡಿಸಿ ಅವನ ರಾಜ್ಯದಿಂದ ಹೊರತಂದ ದೇವರಾದ ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿ ಅನ್ಯದೇವತೆಗಳನ್ನು ಪೂಜಿಸಿದರು.</verse>
				<verse number="8">ತಮ್ಮ ನಾಡಿನಿಂದ ಸರ್ವೇಶ್ವರ ಹೊರಡಿಸಿಬಿಟ್ಟಿದ್ದ ಜನಾಂಗಗಳ ಮತ್ತು ಇಸ್ರಯೇಲ್ ರಾಜರ ದುರಾಚಾರಗಳನ್ನು ಅವರು ಅನುಸರಿಸಿದರು.</verse>
				<verse number="9">ತಮ್ಮ ದೇವರಾದ ಆ ಸರ್ವೇಶ್ವರನಿಗೆ ವಿರೋಧವಾದ ಕೃತ್ಯಗಳನ್ನು ಗುಪ್ತವಾಗಿ ನಡೆಸಿದರು; ಕಾವಲುಗಾರರ ಗೋಪುರವುಳ್ಳ ಚಿಕ್ಕ ಊರು ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣದವರೆಗಿರುವ ಎಲ್ಲಾ ಊರುಗಳಲ್ಲಿ ತಮಗಾಗಿ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು;</verse>
				<verse number="10">ಎಲ್ಲಾ ದಿಣ್ಣೆಗಳ ಮೇಲೆ ಮತ್ತು ಎಲ್ಲಾ ಹಸಿರು ಮರಗಳ ಕೆಳಗೆ ಕಲ್ಲುಗಂಬ, ಅಶೇರುವಿಗ್ರಹಸ್ಥಂಭ ಇವುಗಳನ್ನು ಸ್ಥಾಪಿಸಿದರು.</verse>
				<verse number="11">ತಮ್ಮ ನಾಡಿನಿಂದ ಸರ್ವೇಶ್ವರ ಹೊರಡಿಸಿಬಿಟ್ಟಿದ್ದ ಅನ್ಯಜನಾಂಗಗಳಂತೆ ಎಲ್ಲಾ ಪೂಜಾಸ್ಥಳಗಳಲ್ಲಿ ಧೂಪಾರತಿಯೆತ್ತಿ ತಮ್ಮ ದುಷ್ಕೃತ್ಯಗಳಿಂದ ಅವರನ್ನು ರೇಗಿಸಿದರು;</verse>
				<verse number="12">ಸರ್ವೇಶ್ವರನ ಆಜ್ಞೆಯನ್ನು ಮೀರಿ ವಿಗ್ರಹಗಳನ್ನು ಆರಾಧಿಸಿದರು.</verse>
				<verse number="13">ದರ್ಶಿನಿಗಳೆನಿಸಿಕೊಂಡ ತಮ್ಮ ಪ್ರವಾದಿಗಳ ಮುಖಾಂತರ ಇಸ್ರಯೇಲ ಯೆಹೂದ್ಯರಿಗೆ, “ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೂ ನನ್ನ ದಾಸರಾದ ಪ್ರವಾದಿಗಳ ಮುಖಾಂತರ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾವಿಧಿನಿಯಮಗಳನ್ನು ಕೈಕೊಂಡು ನಡೆಯಿರಿ,” ಎಂದು ಖಂಡಿತವಾಗಿ ಹೇಳಿದರು.</verse>
				<verse number="14">ಆದರೆ ಅವರು, ದೇವರಾದ ಸರ್ವೇಶ್ವರನನ್ನು ನಂಬದೆ, ಅವರ ಆಜ್ಞೆಗಳಿಗೆ ಮಣಿಯದೆಯಿದ್ದ ತಮ್ಮ ಹಿರಿಯರಂತೆ, ಕಿವಿಗೊಡದೆ ಹೋದರು.</verse>
				<verse number="15">ಸರ್ವೇಶ್ವರ ತಮ್ಮ ಪೂರ್ವಜರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿವಾಕ್ಯಗಳನ್ನೂ ತಿರಸ್ಕರಿಸಿ, ಮಿಥ್ಯಾದೇವತೆಗಳನ್ನು ಪೂಜಿಸಿ ನಿಸ್ಸಾರ್ಥಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಸರ್ವೇಶ್ವರ ಆಜ್ಞಾಪಿಸಿದ್ದರೂ ಕೇಳದೆ ಆ ಜನಾಂಗಗಳನ್ನೇ ಅನುಸರಿಸಿದರು.</verse>
				<verse number="16">ತಮ್ಮ ದೇವರಾದ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಮೀರಿ, ಎರಡು ಎರಕದ ಹೋರಿಕರುಗಳ ಮೂರ್ತಿಗಳನ್ನು ಮಾಡಿಕೊಂಡರು; ಅಶೇರ ವಿಗ್ರಹಸ್ಥಂಭಗಳನ್ನು ನಿಲ್ಲಿಸಿಕೊಂಡರು; ಆಕಾಶಸೈನ್ಯ ಹಾಗು ಬಾಳ್ ದೇವತೆಗಳನ್ನು ಪೂಜಿಸಿದರು;</verse>
				<verse number="17">ತಮ್ಮ ಗಂಡುಹೆಣ್ಣು ಮಕ್ಕಳನ್ನು ಬಲಿಯಗ್ನಿಪರೀಕ್ಷೆಗೆ ಗುರಿಮಾಡಿದರು. ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟವುಗಳನ್ನು ಮಾಡಿದರು. ಕಣಿಹೇಳುವುದು, ಯಂತ್ರಮಂತ್ರಗಳನ್ನು ಮಾಡುವುದು, ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನೇ ಮಾರಿಬಿಟ್ಟು ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದರು.</verse>
				<verse number="18">ಈ ಪ್ರಕಾರ ನಡೆದುದರಿಂದ ಸರ್ವೇಶ್ವರ ಅವರ ಮೇಲೆ ಕಡುಕೋಪಗೊಂಡು ಯೆಹೂದಕುಲದವರ ಹೊರತು, ಉಳಿದ ಎಲ್ಲಾ ಕುಲಗಳವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.</verse>
				<verse number="19">ಜುದೇಯದವರು ಸಹ ತಮ್ಮ ದೇವರಾದ ಸರ್ವೇಶ್ವರನ ಆಜ್ಞೆಯನ್ನು ಕೈಕೊಳ್ಳದೆ ಇಸ್ರಯೇಲರ ಪದ್ಧತಿಯನ್ನು ಅನುಸರಿಸಿದ್ದರಿಂದ,</verse>
				<verse number="20">ಇಸ್ರಯೇಲ್ ಕುಲಗಳಲ್ಲಿ ಉಳಿದಿದ್ದ ಇವರನ್ನೂ ಹೇಸಿ, ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟು, ಸೂರೆಮಾಡುವವರಿಗೆ ಒಪ್ಪಿಸಿ, ಶಿಕ್ಷಿಸಿದರು.</verse>
				<verse number="21">ಇಸ್ರಯೇಲ್ ರಾಜ್ಯವನ್ನು ದಾವೀದ ಸಂತಾನದವರ ಕೈಯಿಂದ ಕಿತ್ತುಕೊಂಡ ನಂತರ, ಇಸ್ರಯೇಲರು ನೆಬಾಟನ ಮಗ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಂಡರು. ಅವನು ಅವರನ್ನು ಸರ್ವೇಶ್ವರನ ಭಕ್ತಿಮಾರ್ಗದಿಂದ ತಪ್ಪಿಸಿ ಮಹಾಪಾಪಕ್ಕೆ ಒಳಪಡಿಸಿದನು.</verse>
				<verse number="22">ಅವರು ಯಾರೊಬ್ಬಾಮನ ದುರ್ಮಾರ್ಗದಲ್ಲೇ ನಡೆಯುವುದನ್ನು ಬಿಡಲಿಲ್ಲವಾದುದರಿಂದ</verse>
				<verse number="23">ಸರ್ವೇಶ್ವರ, ತಮ್ಮ ದಾಸರಾದ ಎಲ್ಲಾ ಪ್ರವಾದಿಗಳ ಮುಖಾಂತರ ಭವಿಷ್ಯ ನುಡಿದಂತೆ, ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಅವರು ಸೆರೆಯವರಾಗಿ ತಮ್ಮ ನಾಡಿನಿಂದ ಅಸ್ಸೀರಿಯಾ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ.</verse>
				<verse number="24">ಅಸ್ಸೀರಿಯಾದ ಅರಸನು ಸಮಾರಿಯಾ ಪಟ್ಟಣಗಳಲ್ಲಿ ವಾಸವಾಗಿದ್ದ ಇಸ್ರಯೇಲರನ್ನು ಸೆರೆಯಾಗಿ ಒಯ್ದನಂತರ ಅವರಿಗೆ ಬದಲಾಗಿ ಆ ಪಟ್ಟಣಗಳಿಗೆ ಬಾಬೆಲ್, ಕೂತಾ, ಅವ್ವಾ, ಹಮಾತ್, ಸೆಫರ್ವಯಿಮ್ ಎಂಬ ಊರುಗಳವರನ್ನು ಕಳುಹಿಸಿದನು. ಅವರು ಸಮಾರಿಯಾ ನಾಡನ್ನು ಸ್ವತಂತ್ರಿಸಿಕೊಂಡು ಅದರ ಪಟ್ಟಣಗಳಲ್ಲಿ ವಾಸಿಸಿದರು.</verse>
				<verse number="25">ಅವರಿಗೆ ಆರಂಭದಲ್ಲಿ ಸರ್ವೇಶ್ವರನಲ್ಲಿ ಭಯಭಕ್ತಿ ಇರಲಿಲ್ಲ. ಆದ್ದರಿಂದ ಸರ್ವೇಶ್ವರ ಸಿಂಹಗಳನ್ನು ಕಳುಹಿಸಿದರು; ಅವು ಅವರಲ್ಲಿ ಅನೇಕರನ್ನು ಕೊಂದವು.</verse>
				<verse number="26">ಅಸ್ಸೀರಿಯದ ರಾಜನ ಸೇವಕರು ಅವನಿಗೆ, “ನೀವು ಸಮಾರಿಯಾ ಪಟ್ಟಣಗಳಿಗೆ ಕಳುಹಿಸಿದ ಆಯಾ ಊರುಗಳ ಜನರು, ಆ ನಾಡಿನ ದೇವರಿಗೆ ಸೇವೆಮಾಡುವ ರೀತಿಯನ್ನು ಅರಿಯದವರಾಗಿದ್ದಾರೆ. ಆದುದರಿಂದ ಅಲ್ಲಿನ ದೇವರು ಸಿಂಹಗಳನ್ನು ಕಳುಹಿಸಿ ಅವರನ್ನು ಸಂಹರಿಸುತ್ತಿರುತ್ತಾನೆ,” ಎಂದು ತಿಳಿಸಿದರು.</verse>
				<verse number="27">ಆಗ ಅವನು, “ಅಲ್ಲಿಂದ ಇಲ್ಲಿಗೆ ಸೆರೆಯವರಾಗಿ ಬಂದಿರುವ ಯಾಜಕರಲ್ಲೊಬ್ಬನನ್ನು ಅಲ್ಲಿಗೆ ಕಳುಹಿಸಿರಿ. ಅವನು ಹೋಗಿ ಅಲ್ಲಿ ವಾಸವಾಗಿದ್ದು ಆ ನಾಡಿನ ದೇವರಿಗೆ ಸೇವೆಮಾಡುವ ರೀತಿಯನ್ನು ಅವರಿಗೆ ಕಲಿಸಲಿ,” ಎಂದು ಆಜ್ಞಾಪಿಸಿದನು.</verse>
				<verse number="28">ಅವರು ಸಮಾರಿಯಾದಿಂದ ಸೆರೆಯವರಾಗಿ ಬಂದಿದ್ದ ಒಬ್ಬ ಯಾಜಕನನ್ನು ಅಲ್ಲಿಗೆ ಕಳುಹಿಸಿದರು. ಇವನು ಬೇತೇಲಿನಲ್ಲಿ ವಾಸವಾಗಿದ್ದು, ಜನರಿಗೆ ಸರ್ವೇಶ್ವರನ ಭಕ್ತಿಯನ್ನು ಬೋಧಿಸಿದನು.</verse>
				<verse number="29">ಆದರೂ ಆ ಜನಾಂಗಗಳವರು ತಮ್ಮ ದೇವತೆವಿಗ್ರಹಗಳನ್ನು ಮಾಡಿಕೊಂಡು ತಾವು ವಾಸಿಸುವ ಊರುಗಳೊಳಗೆ ಸಮಾರಿಯದವರು ಏರ್ಪಡಿಸಿದ್ದ ಪೂಜಾಸ್ಥಳಗಳಲ್ಲಿ ಅವುಗಳನ್ನಿಟ್ಟು ಪೂಜಿಸುತ್ತಿದ್ದರು.</verse>
				<verse number="30">ಬಾಬಿಲೋನಿನವರು ಸುಕ್ಕೋತ್ಬೆನೋತ್, ಕೂತದವರು ನೇರ್ಗಲ್,</verse>
				<verse number="31">ಹಮಾತಿನವರು ಅಷೀಮಾ, ಅವ್ವೀಯರು ನಿಭಜ್ ಮತ್ತು ತರ್ತಕ್ ಎಂಬ ದೇವತೆಗಳನ್ನು ಪೂಜಿಸುತ್ತಿದ್ದರು. ಸೆಫರ್ವಯಿಮಿನವರು ತಮ್ಮ ಕುಲದೇವತೆಗಳಾಗಿರುವ ಅದ್ರೆಮ್ಮೆಲೆಕ್ ಹಾಗು ಅನಮೆಲೆಕ್ ಎಂಬುವುಗಳಿಗಾಗಿ ತಮ್ಮ ಮಕ್ಕಳನ್ನು ಬಲಿಯಗ್ನಿ ಪರೀಕ್ಷೆಗೆ ಗುರಿಮಾಡುತ್ತಿದ್ದರು.</verse>
				<verse number="32">ಅವರು ಸರ್ವೇಶ್ವರನ ಭಕ್ತರಾಗಿದ್ದರೂ ತಮ್ಮಲ್ಲೆ ಯಾರ್ಯಾರನ್ನೋ ಉನ್ನತ ಪೂಜಾಸ್ಥಳಗಳ ಯಾಜಕರನ್ನಾಗಿ ನೇಮಿಸಿಕೊಂಡು, ಅವರ ಮುಖಾಂತರ ಪೂಜಾಸ್ಥಳದ ಗುಡಿಗಳಲ್ಲಿ ಆರಾಧನೆ ನಡೆಸುತ್ತಿದ್ದರು.</verse>
				<verse number="33">ಸರ್ವೇಶ್ವರನ ಭಕ್ತರಾಗಿದ್ದ ಅವರು ತಾವು ಬಿಟ್ಟುಬಂದ ದೇಶಗಳ ಪದ್ಧತಿಯ ಪ್ರಕಾರ ತಮ್ಮ ಕುಲದೇವತೆಗಳ ಆರಾಧನೆಯನ್ನೂ ಮಾಡುತ್ತಿದ್ದರು.</verse>
				<verse number="34">ಆ ಕಾಲದ ಪದ್ಧತಿಯನ್ನು ಇಂದಿಗೂ ಮುಂದುವರಿಸುತ್ತಿದ್ದಾರೆ. ಸರ್ವೇಶ್ವರನಲ್ಲಿ ಭಯಭಕ್ತಿ ಇಸ್ರಯೇಲರಿಗಿಲ್ಲ; ಅವರಿಂದಲೇ ಇಸ್ರಯೇಲನೆಂಬ ಹೆಸರು ಹೊಂದಿದ ಯಕೋಬನ ಸಂತಾನದವರಿಗೆ ಕೊಡಲಾದ ಆಜ್ಞಾನಿಯಮವಿಧಿ ಧರ್ಮಶಾಸ್ತ್ರಗಳನ್ನು ಅವರು ಅನುಸರಿಸಲಿಲ್ಲ.</verse>
				<verse number="35">ಇಸ್ರಯೇಲರಿಗೆ ಸರ್ವೇಶ್ವರ, “ನೀವು ಅನ್ಯದೇವತೆಗಳನ್ನು ಆರಾಧಿಸಬಾರದು, ಅವುಗಳಿಗೆ ಕೈಮುಗಿಯಲೂಬಾರದು. ಸೇವೆಮಾಡಬಾರದು, ಬಲಿ ಅರ್ಪಿಸಲೂಬಾರದು.</verse>
				<verse number="36">ನಿಮ್ಮನ್ನು ಮಹಾಶಕ್ತಿ ಹಾಗು ಭುಜಪರಾಕ್ರಮಗಳ ಮೂಲಕ ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದ ಸರ್ವೇಶ್ವರನಾದ ನನ್ನಲ್ಲೇ ಭಯಭಕ್ತಿಯುಳ್ಳವರಾಗಿ ನನಗೊಬ್ಬನಿಗೇ ಕೈಮುಗಿದು ಬಲಿಯರ್ಪಿಸಬೇಕು.</verse>
				<verse number="37">ನಾನು ನಿಮಗೆ ಬರೆಯಿಸಿಕೊಟ್ಟ ಆಜ್ಞಾನಿಯಮವಿಧಿ ಧರ್ಮಶಾಸ್ತ್ರಗಳನ್ನು ತಪ್ಪದೆ ಕೈಗೊಳ್ಳಬೇಕು.</verse>
				<verse number="38">ಅನ್ಯದೇವತೆಗಳನ್ನು ಪೂಜಿಸಬಾರದು; ನನ್ನ ನಿಬಂಧನೆಯನ್ನು ಮರೆತು ಅನ್ಯದೇವತೆಗಳನ್ನು ಪೂಜಿಸಬಾರದು.</verse>
				<verse number="39">ನಿಮ್ಮ ದೇವರಾಗಿರುವ ಸರ್ವೇಶ್ವರನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ಆಗ ನಿಮ್ಮನ್ನು ಯಾವ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸುವೆನು,” ಎಂದು ಹೇಳಿ ಅವರೊಡನೆ ಒಡಂಬಡಿಕೆ ಮಾಡಿಕೊಂಡರು.</verse>
				<verse number="40">ಆದರೆ ಅವರು ಅದನ್ನು ಲಕ್ಷಿಸದೆ ತಮ್ಮ ಹಿಂದಿನ ಪದ್ಧತಿಗಳನ್ನೇ ಅನುಸರಿಸಿದರು.</verse>
				<verse number="41">ಆ ಜನಾಂಗಗಳವರು ಸರ್ವೇಶ್ವರನ ಭಕ್ತರಾಗಿದ್ದರೂ ತಮ್ಮ ವಿಗ್ರಹಗಳನ್ನು ಆರಾಧಿಸುತ್ತಿದ್ದರು. ಅವರ ಸಂತಾನದವರು ಇಂದಿನವರೆಗೂ ಹಾಗೆಯೇ ಮಾಡುತ್ತಿದ್ದಾರೆ.</verse>
			</chapter>
			<chapter number="18">
				<verse number="1">ಇಸ್ರಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಜುದೇಯ ರಾಜನಾದ ಆಹಾಜನ ಮಗ ಹಿಜ್ಕೀಯನು ಆಳತೊಡಗಿದನು.</verse>
				<verse number="2">ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನು. ಜೆರುಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀ ಎಂಬಾಕೆ ಇವನ ತಾಯಿ.</verse>
				<verse number="3">ಇವನು ಎಲ್ಲಾ ವಿಷಯಗಳಲ್ಲೂ ತನ್ನ ಪೂರ್ವಜ ದಾವೀದನಂತೆ ಸರ್ವೇಶ್ವರನ ಚಿತ್ತಾನುಸಾರ ನಡೆದನು.</verse>
				<verse number="4">ಪೂಜಾಸ್ಥಳಗಳನ್ನು ಹಾಳುಮಾಡಿದನು. ಕಲ್ಲುಗಂಬಗಳನ್ನು ಒಡೆದುಹಾಕಿದನು. ಅಶೇರ ವಿಗ್ರಹಸ್ಥಂಭಗಳನ್ನು ಕೆಡವಿಬಿಟ್ಟನು. ಮೋಶೆ ಮಾಡಿಸಿದ ತಾಮ್ರಸರ್ಪವನ್ನು ಚೂರುಚೂರು ಮಾಡಿದನು. ಇಸ್ರಯೇಲರು ಅದಕ್ಕೆ ಆವರೆಗೂ ಧೂಪಸುಡುತ್ತಿದ್ದರು. ಅದಕ್ಕೆ ‘ನೆಹುಷ್ಟಾನ್’ ಎಂಬ ಹೆಸರಿತ್ತು.</verse>
				<verse number="5">ಇವನು ಇಸ್ರಯೇಲ್ ದೇವರಾದ ಸರ್ವೇಶ್ವರಸ್ವಾಮಿಯಲ್ಲೆ ಭರವಸೆಯಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಹಿಂದೆಯೂ ಅನಂತರವೂ ಇರಲಿಲ್ಲ.</verse>
				<verse number="6">ಇದಲ್ಲದೆ, ಇವನು ಸರ್ವೇಶ್ವರನನ್ನೇ ಹೊಂದಿಕೊಂಡು ಅವರನ್ನು ಬಿಡದೆ ಅನುಸರಿಸುತ್ತಾ, ಅವರು ಮೋಶೆಯ ಮುಖಾಂತರ ಅನುಗ್ರಹಿಸಿದ ಆಜ್ಞೆಗಳನ್ನು ಕೈಗೊಂಡನು.</verse>
				<verse number="7">ಸರ್ವೇಶ್ವರ ಇವನ ಸಂಗಡ ಇದ್ದುದರಿಂದ ಎಲ್ಲಿಗೆ ಹೋದರೂ ಕೃತಾರ್ಥನಾಗಿ ಬರುತ್ತಿದ್ದನು. ಇವನು ಅಸ್ಸೀರಿಯದ ಅರಸನಿಗೆ ವಿರುದ್ಧ ದಂಗೆಯೆದ್ದು ಸ್ವತಂತ್ರನಾದನು.</verse>
				<verse number="8">ಗಾಜಪ್ರಾಂತ್ಯದವರೆಗೆ ವಾಸವಾಗಿದ್ದ ಫಿಲಿಷ್ಟಿಯರನ್ನು ಸೋಲಿಸಿ ಕಾವಲುಗಾರರ ಗೋಪುರವಿದ್ದ ಚಿಕ್ಕ ಹಳ್ಳಿ ಮೊದಲುಗೊಂಡು ಕೋಟೆಕೊತ್ತಲುಗಳುಳ್ಳ ಮಹಾನಗರಗಳವರೆಗೂ ಎಲ್ಲಾ ಊರುಗಳನ್ನು ಹಾಳುಮಾಡಿದನು.</verse>
				<verse number="9">ಇಸ್ರಯೇಲರ ಅರಸನೂ ಏಲನ ಮಗನೂ ಆದ ಹೋಶೇಯನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಅಂದರೆ ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಶಲ್ಮನೆಸೆರನು ಸಮಾರಿಯಕ್ಕೆ ವಿರುದ್ಧ ದಂಡೆತ್ತಿಬಂದಿದ್ದನು.</verse>
				<verse number="10">ಮೂರು ವರ್ಷಗಳವರೆಗೂ ಅದಕ್ಕೆ ಮುತ್ತಿಗೆ ಹಾಕಿದ್ದನು. ಅದು ಅವನಿಗೆ ಇಸ್ರಯೇಲರ ಅರಸನಾದ ಹೋಶೇಯನ ಆಳ್ವಿಕೆಯ ಆರನೆಯ ವರ್ಷದಲ್ಲಿ ಸ್ವಾಧೀನವಾಯಿತು.</verse>
				<verse number="11">ಅವನು ಇಸ್ರಯೇಲರನ್ನು ಸೆರೆಹಿಡಿದು ಹಲಹು, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯ, ಮೇದ್ಯರ ಪಟ್ಟಣಗಳು ಇವುಗಳಿಗೆ ಕಳುಹಿಸಿದನು.</verse>
				<verse number="12">ಇಸ್ರಯೇಲರು ತಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳದೆಹೋದದ್ದೂ ಅವರ ನಿಬಂಧನೆಯನ್ನು ಉಲ್ಲಂಘಿಸಿದ್ದೂ ಅವರ ದಾಸ ಮೋಶೆಯ ಆಜ್ಞೆಗಳಿಗೆ ಅವಿಧೇಯರಾಗಿ ನಡೆದದ್ದೂ ಇದಕ್ಕೆ ಕಾರಣಗಳಾಗಿದ್ದವು.</verse>
				<verse number="13">ಅರಸ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ, ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು ಜುದೇಯ ಪ್ರಾಂತ್ಯದ ಸುಭದ್ರ ಪಟ್ಟಣಗಳನ್ನೆಲ್ಲಾ ಸ್ವಾಧೀನಮಾಡಿಕೊಂಡನು.</verse>
				<verse number="14">ಆಗ ಜುದೇಯದ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಸ್ಸೀರಿಯದ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಾನು ಅಪರಾಧಿ; ತಾವು ನನ್ನನ್ನು ಬಿಟ್ಟುಹೋಗಬೇಕು; ತಾವು ನನಗೆ ವಿಧಿಸುವಷ್ಟನ್ನೂ ಕೊಡುತ್ತೇನೆ,” ಎಂದು ಹೇಳಿ ಕಳುಹಿಸಿದನು. ಅಸ್ಸೀರಿಯದ ಅರಸನು ಹತ್ತು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನೂ ಒಂದು ಸಾವಿರ ಕಿಲೋಗ್ರಾಂ ಬಂಗಾರವನ್ನೂ ಕೊಡಬೇಕೆಂದು ಆಜ್ಞಾಪಿಸಿದನು.</verse>
				<verse number="15">ಆಗ ಹಿಜ್ಕೀಯನು ಸರ್ವೇಶ್ವರನ ಆಲಯದಲ್ಲಿಯೂ ಅರಮನೆಯ ಭಂಡಾರದಲ್ಲಿಯೂ ಸಿಕ್ಕಿದ ಬೆಳ್ಳಿಯನ್ನೂ</verse>
				<verse number="16">ತಾನು ಸರ್ವೇಶ್ವರನ ಆಲಯದ ಕದಗಳಿಗೂ ಕಂಬಗಳಿಗೂ ಹೊದಿಸಿದ್ದ ಬಂಗಾರದ ತಗಡನ್ನೂ ತೆಗೆದುಕೊಂಡು ಅಸ್ಸೀರಿಯದ ಅರಸನಿಗೆ ಕಳುಹಿಸಿದನು.</verse>
				<verse number="17">ಅಸ್ಸೀರಿಯದ ಅರಸನು ಲಾಕೀಷಿನಿಂದ ಮಹಾ ಸೈನ್ಯಸಹಿತರಾದ ತರ್ತಾನ್, ರಬ್ಸಾರೀಸ್, ರಬ್ಷಾಕೆ ಎಂಬವರನ್ನು ಜೆರುಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಇವರು ದಿಣ್ಣೆ ಹತ್ತಿ ಜೆರುಸಲೇಮಿಗೆ ಬಂದು, ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದ ಹತ್ತಿರವಿರುವ, ಕೆರೆಯ ಕಾಲುವೆಯ ಬಳಿ, ಪಾಳೆಯ ಮಾಡಿಕೊಂಡು ಅರಸನನ್ನು ಕೂಗಿ ಕರೆದರು.</verse>
				<verse number="18">ಆಗ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ ಮತ್ತು ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ಅಲ್ಲಿಗೆ ಬಂದರು.</verse>
				<verse number="19">ರಬ್ಷಾಕೆಯು ಅವರಿಗೆ, “ನೀವು ಹೋಗಿ ಅಸ್ಸೀರಿಯದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ: ‘ನಿನ್ನ ಭರವಸೆಗೆ ಆಧಾರವಾದರೂ ಏನು?</verse>
				<verse number="20">ಬರಿ ಬಾಯಿಮಾತೊಂದರಿಂದ ಯುದ್ಧಕ್ಕೆ ಬೇಕಾದ ವಿವೇಕ ಹಾಗು ಶಕ್ತಿ ಉಂಟೆಂದು ಅರಿತುಕೊಂಡಿರುವೆ. ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ಎದ್ದಿರುವೆ?</verse>
				<verse number="21">ಮುರಿದ ಜೊಂಡಿಗೆ ಸಮಾನವಾದ ಈಜಿಪ್ಟಿನ ಮೇಲೆ ನಿನಗೆ ಭರವಸೆಯಿದೆಯಷ್ಟೆ. ಅಂಥ ಜೊಂಡನ್ನು ಊರಿಕೊಳ್ಳುವವನ ಕೈಯನ್ನೇ ಚುಚ್ಚಿ ತಿವಿಯುವ ಕೋಲು ಅದು. ಈಜಿಪ್ಟಿನ ರಾಜ ಫರೋಹನಲ್ಲಿ ಭರವಸೆಯಿಟ್ಟವರಿಗೆ ಆಗುವ ಗತಿ ಇದೇ.’</verse>
				<verse number="22">“ಬಹುಶಃ, ನೀವು ‘ನಮ್ಮ ದೇವರಾದ ಸರ್ವೇಶ್ವರನನ್ನೇ ನಂಬಿಕೊಂಡಿದ್ದೇವೆ,’ ಎಂದು ಹೇಳಬಹುದು. ಜೆರುಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆಮಾಡಬೇಕು ಎಂದು ಯೆಹೂದ್ಯರಿಗೂ ಮತ್ತು ಜೆರುಸಲೇಮಿನವರಿಗೂ ಹಿಜ್ಕೀಯನು ಆಜ್ಞಾಪಿಸಿ ಆ ಸರ್ವೇಶ್ವರ ಸ್ವಾಮಿಯ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೆ?</verse>
				<verse number="23">ಆದುದರಿಂದ ಬಾ, ಬಂದು ನನ್ನ ಒಡೆಯರಾದ ಅಸ್ಸೀರಿಯದ ಅರಸನೊಂದಿಗೆ ಒಂದು ಒಪ್ಪಂದ ಮಾಡಿಕೊ. ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುವನು; ಅವುಗಳ ಮೇಲೆ ಕೂರಿಸುವಷ್ಟು ಮಂದಿ ಸವಾರರು ನಿನಗಿದ್ದಾರೋ?</verse>
				<verse number="24">ಇದು ಕೂಡ ನಿನಗೆ ಅಸಾಧ್ಯವಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ಹೇಗೆ ತಾನೆ ಸಾಧ್ಯ? ರಥಾಶ್ವಬಲಗಳಿಗಾಗಿ ಈಜಿಪ್ಟಿನವರನ್ನು ನೀನು ನಂಬಿಕೊಂಡಿರುವಂತೆ ಕಾಣುತ್ತದೆ.</verse>
				<verse number="25">ಈ ನಾಡನ್ನು, ಹಾಳುಮಾಡುವುದಕ್ಕೆ ಸರ್ವೇಶ್ವರಸ್ವಾಮಿಯ ಒಪ್ಪಿಗೆಯಿಲ್ಲದೆ ಇಲ್ಲಿಗೆ ನಾನು ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು’ ಎಂದು ಆ ಸರ್ವೇಶ್ವರಸ್ವಾಮಿಯೇ ನನಗೆ ಆಜ್ಞೆ ಮಾಡಿದ್ದಾರೆ, ಎಂಬ ಈ ಮಾತುಗಳು ಅರಸನವು,” ಎಂದನು.</verse>
				<verse number="26">ಆಗ ಹಿಲ್ಕೀಯನ ಮಗ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬವರು ರಬ್ಷಾಕೆಗೆ, “ದಯವಿಟ್ಟು ನಿಮ್ಮ ಸೇವಕರಾದ ನಮ್ಮೊಡನೆ ಅರಾಮಾಯಿಕ್ ಭಾಷೆಯಲ್ಲಿ ಮಾತನಾಡಿ. ಅದು ನಮಗೆ ಅರ್ಥವಾಗುತ್ತದೆ. ಆದರೆ ಹಿಬ್ರೂ ಭಾಷೆಯಲ್ಲಿ ಮಾತನಾಡಬೇಡಿ. ಅದು ಪೌಳಿಗೋಡೆಯ ಮೇಲಿರುವವರಿಗೂ ಅರ್ಥವಾಗುತ್ತದೆ,” ಎಂದರು.</verse>
				<verse number="27">ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನರು, ನಿಮ್ಮ ಸಂಗಡವಾಗಲಿ ಮತ್ತು ನಿಮ್ಮ ಒಡೆಯರ ಸಂಗಡವಾಗಲಿ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕಾಗಿಯೇ ಕಳುಹಿಸಿದ್ದಾರೆ. ಈ ಜನರು ನಿಮ್ಮೊಡನೆ ಇದ್ದರೆ ನಿಮ್ಮ ಹಾಗೆ ಇವರು ಕೂಡ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ,” ಎಂದು ಉತ್ತರಕೊಟ್ಟನು.</verse>
				<verse number="28">ಬಳಿಕ ಆ ದಳಪತಿಯು ಆ ಗೋಡೆಯ ಮೇಲೆ ನಿಂತಿದ್ದವರನ್ನು ಉದ್ದೇಶಿಸಿ ಹಿಬ್ರೂ ಭಾಷೆಯಲ್ಲೇ, “ನೀವು ಅಸ್ಸೀರಿಯದ ರಾಜಾಧಿರಾಜನ ಮಾತನ್ನು ಕೇಳಿರಿ;</verse>
				<verse number="29">ಹಿಜ್ಕೀಯನ ಮಾತನ್ನು ಕೇಳಿ ಮೋಸಹೋಗಬೇಡಿ; ನಿಮ್ಮನ್ನು ಬಿಡಿಸಲು ಅವನಿಂದಾಗದು.</verse>
				<verse number="30">ಹಿಜ್ಕೀಯನು ನಿಮಗೆ, ‘ಸರ್ವೇಶ್ವರ ಸ್ವಾಮಿಯಲ್ಲೇ ನಂಬಿಕೆಯಿಡಿ; ಅವರು ನಿಮ್ಮನ್ನು ಹೇಗಾದರೂ ಮಾಡಿ ರಕ್ಷಿಸುವರು; ಈ ಪಟ್ಟಣವು ಅಸ್ಸೀರಿಯದ ರಾಜನ ವಶವಾಗುವುದಿಲ್ಲ,’ ಎಂಬುದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿ, ಒಪ್ಪಿಕೊಳ್ಳಬೇಡಿ.</verse>
				<verse number="31">ಅಸ್ಸೀರಿಯದ ಅರಸನಾದ ನನ್ನ ಮಾತನ್ನು ಕೇಳಿ; ನನ್ನೊಡನೆ ಒಪ್ಪಂದಮಾಡಿಕೊಂಡು ನನ್ನ ಆಶ್ರಯವನ್ನು ಸೇರಿರಿ, ಆಗ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರಮರದ ಹಾಗು ದ್ರಾಕ್ಷಾಲತೆಯ ಹಣ್ಣುಗಳನ್ನು ತಿನ್ನುವನು; ತನ್ನ ಬಾವಿಯ ನೀರನ್ನೇ ಕುಡಿಯುವನು.</verse>
				<verse number="32">ಸ್ವಲ್ಪಕಾಲವಾದ ನಂತರ ನಾನು ಬಂದು ನಿಮ್ಮನ್ನು ಇನ್ನೊಂದು ನಾಡಿಗೆ ಕರೆದುಕೊಂಡು ಹೋಗುವೆನು. ಅಲ್ಲಿ ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೀತೋಟ, ಎಣ್ಣೇಮರ, ಜೇನುತುಪ್ಪ ಸಮೃದ್ಧಿಯಾಗಿರುವುವು. ನಿಮ್ಮ ನಾಡಿಗೆ ಸರಿಸಮಾನವಾಗಿರುವುವು; ನೀವು ಸಾಯುವುದಿಲ್ಲ, ಬದುಕುವಿರಿ; ‘ಸರ್ವೇಶ್ವರ ನಮ್ಮನ್ನು ರಕ್ಷಿಸುವರು’ ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಮೂಡಿಸದಂತೆ ಎಚ್ಚರಿಕೆಯಾಗಿರಿ.</verse>
				<verse number="33">ಯಾವ ರಾಷ್ಟ್ರದ ದೇವರುಗಳು ತಾನೇ ಅಸ್ಸೀರಿಯದ ಅರಸನ ಕೈಯಿಂದ ತಮ್ಮ ನಾಡನ್ನು ಬಿಡಿಸಿಕೊಂಡಿದ್ದಾರೆ?</verse>
				<verse number="34">ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಊರುಗಳ ದೇವರುಗಳು ಏನಾದರು? ಅವರು ಸಮಾರಿಯವನ್ನು ನನ್ನ ಕೈಯಿಂದ ತಪ್ಪಿಸಿ ಬಿಡಿಸಿಕೊಂಡರೋ?</verse>
				<verse number="35">ಯಾವ ರಾಷ್ಟ್ರದ ದೇವರುಗಳೂ ತಮ್ಮ ನಾಡನ್ನು ನನ್ನ ಕೈಯಿಂದ ಬಿಡಿಸಲಾಗದೆ ಹೋದಮೇಲೆ ಜೆರುಸಲೇಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡಲು ಸರ್ವೇಶ್ವರನಿಗೆ ಸಾಧ್ಯವೋ?”, ಎಂದು ಕೇಳಿದನು.</verse>
				<verse number="36">ಆ ಸೇನಾಧಿಪತಿಗೆ ಯಾವ ಉತ್ತರವನ್ನು ಕೊಡಬಾರದೆಂದು ಅರಸನು ತನ್ನ ಪ್ರಜೆಗಳಿಗೆ ಆಜ್ಞಾಪಿಸಿದ್ದರಿಂದ ಅವರು ಏನನ್ನೂ ಹೇಳದೆ ಸುಮ್ಮನಿದ್ದರು.</verse>
				<verse number="37">ಬಳಿಕ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಅಗಿದ್ದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ, ಎಂಬವರು ಸಿಟ್ಟಿನಿಂದ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಅರಸ ಹಿಜ್ಕೀಯನ ಬಳಿಗೆ ಬಂದು ಅವನಿಗೆ ರಬ್ಷಾಕೆಯ ಮಾತುಗಳನ್ನು ತಿಳಿಸಿದರು.</verse>
			</chapter>
			<chapter number="19">
				<verse number="1">ಈ ವರದಿಯನ್ನು ಕೇಳಿದ ಹಿಜ್ಕೀಯನು ಕೋಪದಿಂದ ತನ್ನ ಬಟ್ಟೆಯನ್ನು ಹರಿದುಕೊಂಡು, ಗೋಣಿತಟ್ಟನ್ನು ಕಟ್ಟಿಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು.</verse>
				<verse number="2">ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಹಿರಿಯ ಯಾಜಕರು, ಇವರನ್ನು ಕರೆಯಿಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಹೋಗಿ,</verse>
				<verse number="3">ಅವನಿಗೆ ಹೀಗೆಂದು ಹೇಳಿ: ‘ಈ ದಿನ ನಮಗೆ ಮಹಾಸಂಕಟದ ದಿನ, ದಂಡನೆಯ ದಿನ, ನಿಂದೆ ಅವಮಾನದ ದಿನ; ಹೆರಿಗೆಯ ಕಾಲ ಬಂದಿದೆ. ಆದರೆ ಹೆರುವುದಕ್ಕೆ ಶಕ್ತಿಸಾಲದು.</verse>
				<verse number="4">ಜೀವಸ್ವರೂಪರಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನ ಅಸ್ಸೀರಿಯದ ರಾಜನಿಂದ ಕಳುಹಿಸಲಾಗಿದ್ದ ರಬ್ಷಾಕೆಯ ನಿಂದಾವಾಕ್ಯಗಳನ್ನು ನಿಮ್ಮ ದೇವರಾದ ಸರ್ವೇಶ್ವರ ಕೇಳಿದ್ದಾರೆ. ನಿಮ್ಮ ದೇವರಾದ ಸರ್ವೇಶ್ವರ ತಾವು ಕೇಳಿದ ಆ ವಾಕ್ಯಗಳ ನಿಮಿತ್ತ ಮುಯ್ಯಿತೀರಿಸಾರು; ಹೀಗಿರಲು ಉಳಿದಿರುವ ಸ್ವಲ್ಪ ಜನರಿಗಾಗಿ ದೇವರನ್ನು ನೀವು ಪ್ರಾರ್ಥನೆ ಮಾಡಿ’ ಎಂದು ಹಿಜ್ಕೀಯ ಕೇಳಿಕೊಂಡಿದ್ದಾರೆ ಎಂದು ತಿಳಿಸಿ,” ಎಂದನು.</verse>
				<verse number="5">ಅರಸ ಹಿಜ್ಕೀಯನ ಸೇವಕರು ತನ್ನ ಬಳಿಗೆ ಬಂದು ವರದಿಮಾಡಿದ ಮೇಲೆ ಯೆಶಾಯನು,</verse>
				<verse number="6">“ನೀವು ಹಿಂದಿರುಗಿ ಹೋಗಿ ನಿಮ್ಮ ರಾಜನಿಗೆ, ‘ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿ ಆಡಿದ ಮಾತುಗಳನ್ನು ಕೇಳಿದ್ದೇನೆ. ಅವುಗಳಿಗಾಗಿ ನೀನು ಹೆದರಬೇಕಾಗಿಲ್ಲ.</verse>
				<verse number="7">ಅವನ ಮೇಲೆ ಭಯಾತ್ಮನನ್ನು ಬರಮಾಡುವೆನು. ಅವನು ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಅಲ್ಲೇ ಕತ್ತಿಗೆ ತುತ್ತಾಗುವಂತೆ ಮಾಡುವೆನು, ಇದು ಸರ್ವೇಶ್ವರನ ನುಡಿ, ಎಂದು ತಿಳಿಸಿರಿ,” ಎಂದು ಉತ್ತರಕೊಟ್ಟನು.</verse>
				<verse number="8">ರಬ್ಷಾಕೆಯು ಹಿಂದಿರುಗಿ ಹೋಗುವಾಗ ದಾರಿಯಲ್ಲಿ, ಅಸ್ಸೀರಿಯದ ಅರಸನು ಲಾಕೀಷನನ್ನು ಬಿಟ್ಟು ಲಿಬ್ನಕ್ಕೆ ಹೋಗಿ ಆ ರಾಜ್ಯದ ವಿರುದ್ಧ ಯುದ್ಧಮಾಡುತ್ತಿರುವುದಾಗಿ ಸಮಾಚಾರ ಪಡೆದನು. ಆದುದರಿಂದ ಅವನು ಅಲ್ಲಿಗೆ ತೆರಳಿದನು.</verse>
				<verse number="9">ಅಷ್ಟರಲ್ಲಿ ಸುಡಾನಿನ ರಾಜ ತಿರ್ಹಾಕನು ತನಗೆ ವಿರುದ್ಧವಾಗಿ ಹೊರಟಿದ್ದಾನೆ ಎಂಬ ಸುದ್ದಿ ಅಸ್ಸೀರಿಯದ ಅರಸನಿಗೆ ಮುಟ್ಟಿತು. ಆಗ ಅವನು ಜುದೇಯದ ಅರಸನಾದ ಹಿಜ್ಕೀಯನಿಗೆ,</verse>
				<verse number="10">“ಜೆರುಸಲೇಮ್ ನನ್ನ ವಶವಾಗುವುದಿಲ್ಲವೆಂದು ನೀನು ನಂಬುವ ದೇವರು ನಿನಗೆ ಹೇಳಿ ನಿನ್ನನ್ನು ಮೋಸಗೊಳಿಸಬಹುದು.</verse>
				<verse number="11">ಅಸ್ಸೀರಿಯದ ಅರಸನು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಪಡಿಸಿದ್ದಾನೆಂಬ ಸಮಾಚಾರ ನಿನಗೆ ಮುಟ್ಟಿರಬೇಕು, ಹೀಗಿರುವಲ್ಲಿ ನೀನು ಮಾತ್ರ ತಪ್ಪಿಸಿಕೊಳ್ಳುವಿಯೋ?</verse>
				<verse number="12">ನನ್ನ ತಂದೆತಾತಂದಿರು ಗೋಜಾನ್, ಖಾರನ್, ರೆಚೆಫ್ ಎಂಬ ನಗರಗಳ ಜನರನ್ನು ಮತ್ತು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನು ನಾಶಮಾಡಿದರು. ಆಗ ಅವರ ದೇವರುಗಳು ಅವರನ್ನು ರಕ್ಷಿಸಲಾಗಲಿಲ್ಲ.</verse>
				<verse number="13">ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ್ ಮತ್ತು ಇವ್ವಾ ಎಂಬ ನಗರಗಳ ಅರಸರ ಗತಿ ಏನಾಯಿತು?” ಎಂದು ಪತ್ರ ಬರೆದು ದೂತರ ಸಮೇತ ಕಳುಹಿಸಿದನು.</verse>
				<verse number="14">ಹಿಜ್ಕೀಯನು, ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ, ದೇವಾಲಯಕ್ಕೆ ಹೋಗಿ ಅದನ್ನು ಸರ್ವೇಶ್ವರ ಸ್ವಾಮಿಯ ಮುಂದೆ ತೆರೆದಿಟ್ಟು, ಹೀಗೆಂದು ಪ್ರಾರ್ಥನೆ ಮಾಡಿದನು:</verse>
				<verse number="15">“ಇಸ್ರಯೇಲಿನ ದೇವರೇ, ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ.</verse>
				<verse number="16">ಸರ್ವೇಶ್ವರಾ, ಕಿವಿಗೊಟ್ಟು ಕೇಳಿ; ಸರ್ವೇಶ್ವರಾ, ಕಣ್ಣಿಟ್ಟು ನೋಡಿ: ಸನ್ಹೇರೀಬನು ಜೀವಸ್ವರೂಪ ದೇವರಾದ ನಿಮ್ಮನ್ನು ನಿಂದಿಸುವುದಕ್ಕಾಗಿ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೊಳ್ಳಿ.</verse>
				<verse number="17">ಸರ್ವೇಶ್ವರಾ, ಅಸ್ಸೀರಿಯದ ರಾಜರು ಸಕಲ ರಾಷ್ಟ್ರಗಳನ್ನೂ ಹಾಗೂ ಅವರ ನಾಡುಗಳನ್ನೂ ಹಾಳುಮಾಡಿದ್ದಾರೆ.</verse>
				<verse number="18">ಅವರ ದೇವರುಗಳನ್ನೂ ಬೆಂಕಿಗೆ ಹಾಕಿದ್ದು ನಿಜ. ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳ ಬೊಂಬೆಗಳಷ್ಟೆ. ಆದುದರಿಂದಲೇ ಅವು ಅವರಿಂದ ಹಾಳಾದವು.</verse>
				<verse number="19">ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ದೇವರು ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಈ ಅಸ್ಸೀರಿಯನ ಕೈಯಿಂದ ಬಿಡಿಸಿರಿ.”</verse>
				<verse number="20">ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ: ” ಇಸ್ರಯೇಲಿನ ದೇವರಾದ ಸರ್ವೇಶ್ವರಸ್ವಾಮಿಯ ಈ ಮಾತುಗಳನ್ನು ಕೇಳು: ನೀನು ಅಸ್ಸೀರಿಯದ ರಾಜನಾದ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳು ಸರ್ವೇಶ್ವರಸ್ವಾಮಿಗೆ ಮುಟ್ಟಿವೆ. ಅವರು ಅವನನ್ನು ಕುರಿತು ಹೀಗೆಂದಿದ್ದಾರೆ:</verse>
				<verse number="21">‘ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು; ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು.</verse>
				<verse number="22">ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಸದಮಲಸ್ವಾಮಿಯನ್ನು ಅಲ್ಲವೇನು?</verse>
				<verse number="23">ನೀನು ನಿನ್ನ ದೂತರ ಮೂಲಕ ಸರ್ವೇಶ್ವರನನ್ನು ನಿಂದಿಸಿರುವೆ, ಅಲ್ಲದೆ ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿರುವೆ: ‘ಹತ್ತಿದ್ದೇನೆ ಗಿರಿಶಿಖರಗಳನ್ನು ರಥಸಮೂಹದೊಡನೆ ಸೇರಿದ್ದೇನೆ ಲೆಬನೋನಿನ ದುರ್ಗಮ ಸ್ಥಳಗಳನ್ನೇ! ಕಡಿದಿದ್ದೇನೆ ಅದರ ಎತ್ತರವಾದ ದೇವದಾರು ವೃಕ್ಷಗಳನ್ನೇ ಕತ್ತರಿಸಿದ್ದೇನೆ ಅದರ ಶ್ರೇಷ್ಠವಾದ ತುರಾಯಿ ಮರಗಳನ್ನೇ ಒಳಹೊಕ್ಕಿದ್ದೇನೆ ಅಲ್ಲಿನ ದೂರದ ನಿವಾಸಸ್ಥಳಗಳನ್ನೇ, ಶಿಖರವನ್ನೇ, ಪ್ರವೇಶಿಸಿದ್ದೇನೆ ದಟ್ಟವಾದ ಆ ಕಾಡು ಮೇಡುಗಳನ್ನೇ!</verse>
				<verse number="24">ಪರನಾಡುಗಳಲ್ಲಿ ಬಾವಿ ತೋಡಿ ನೀರು ಕುಡಿದಿದ್ದೇನೆ, ನನ್ನ ಅಂಗಾಲಿನಿಂದಲೇ ಈಜಿಪ್ಟಿನ ನದಿಗಳನ್ನೆಲ್ಲಾ ಬತ್ತಿಸಿದ್ದೇನೆ!’</verse>
				<verse number="25">“ಕೇಳು, ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತುಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳುದಿಬ್ಬಗಳನ್ನಾಗಿಸಿದೆ. ಆದರೆ ಸಾಧ್ಯವಾಯಿತಿದು ನನ್ನಿಂದಲೇ; ನಿನಗಿದು ತಿಳಿಯದೆ ಹೋಯಿತೆ?</verse>
				<verse number="26">ಬಲವಿಲ್ಲದವರಾದರು ಆ ನಗರವಾಸಿಗಳು ನನ್ನ ನಿಮಿತ್ತವೆ, ಸಮಾನರಾದರು ಹೊಲದ ಸಸಿಗೆ, ಎಳೆಗರಿಕೆಗೆ, ಮಾಳಿಗೆ ಮೇಲಿನ ಹುಲ್ಲಿಗೆ; ಬೆಳೆಯುವುದಕ್ಕೆ ಮೊದಲೆ ತುತ್ತಾದರು ಬಿರುಗಾಳಿಯ ಹೊಡೆತಕ್ಕೆ!</verse>
				<verse number="27">ನನಗೆ ಗೊತ್ತಿದೆ ನೀ ಕೂರುವುದು, ನೀ ಹೋಗಿಬರುವುದು ನನಗೆ ತಿಳಿದಿದೆ ನೀ ನನ್ನ ಮೇಲೆ ರೌದ್ರಾವೇಶಗೊಂಡಿರುವುದು.</verse>
				<verse number="28">ನನ್ನ ವಿರುದ್ಧ ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ ಎಂದೇ ಹಾಕುವೆ ದಾರ ಕಡಿವಾಣ ಮೂಗಿಗೆ, ಬಾಯಿಗೆ; ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ.”</verse>
				<verse number="29">ಬಳಿಕ ಯೆಶಾಯನು ರಾಜ ಹಿಜ್ಕೀಯನಿಗೆ ಹೀಗೆಂದನು: “ಈ ಮಾತುಗಳು ನೆರವೇರುತ್ತವೆಂಬುದಕ್ಕೆ ಸೂಚನೆ ಇದು: ಈ ವರ್ಷದಲ್ಲಿ ನೀವು ಕೂಳೆಬೆಳೆಯನ್ನು, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಅದು ಬೆಳೆದುದನ್ನು, ಆದರೆ ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದುದನ್ನು, ದ್ರಾಕ್ಷಿತೋಟದಲ್ಲಿ ವ್ಯವಸಾಯ ಮಾಡಿ ಶೇಖರಿಸಿದ್ದನ್ನು ಅನುಭವಿಸಿರಿ.</verse>
				<verse number="30">ಅಳಿದು ಉಳಿದ ಯೆಹೂದ್ಯರು ನಾಡಿನಲ್ಲಿ ಬೇರೂರಿ ನೆಲೆಗೊಳ್ಳುವರು; ಬೆಳೆದು ಅಭಿವೃದ್ಧಿಯಾಗುವರು.</verse>
				<verse number="31">ಅಳಿದುಳಿದವರು ಜೆರುಸಲೇಮಿನಲ್ಲೇ ಹರಡಿಕೊಳ್ಳುವರು; ಸಿಯೋನ್ ಪರ್ವತದಲ್ಲಿ ಅಭಿವೃದ್ಧಿಯಾಗುವರು. ಸರ್ವೇಶ್ವರಸ್ವಾಮಿಯ ಆಗ್ರಹವೇ ಇದನ್ನು ಸಾಧಿಸುವುದು.</verse>
				<verse number="32">“ಅಸ್ಸೀರಿಯದ ಅರಸನನ್ನು ಕುರಿತು ಸರ್ವೇಶ್ವರ ಹೇಳಿರುವ ಮಾತಿದು: ‘ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದರತ್ತ ಬಾಣವನ್ನೆಸೆಯುವುದಿಲ್ಲ, ಕವಚಧಾರಿಗಳನ್ನು ಕಳುಹಿಸುವುದಿಲ್ಲ. ಅದರ ಆಕ್ರಮಣಕ್ಕಾಗಿ ಮಣ್ಣುದಿಬ್ಬಗಳನ್ನು ಎಬ್ಬಿಸುವುದಿಲ್ಲ.</verse>
				<verse number="33">ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು; ಈ ಪಟ್ಟಣಕ್ಕೆ ಕಾಲಿಡನು.</verse>
				<verse number="34">ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು,’ ಎಂದಿದ್ದಾರೆ\.</verse>
				<verse number="35">ಅದೇ ರೀತಿಯಲ್ಲಿ ಸರ್ವೇಶ್ವರಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಅಸ್ಸೀರಿಯರು ಬೆಳಿಗ್ಗೆ ಎದ್ದು ನೋಡುವಾಗ ಪಾಳೆಯ ತುಂಬ ಹೆಣಗಳು ಇದ್ದವು.</verse>
				<verse number="36">ಆದ್ದರಿಂದ ಅಸ್ಸೀರಿಯರ ಅರಸನಾದ ಸನ್ಹೇರೀಬನು ಹಿಂದಿರುಗಿದನು. ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲೆ ವಾಸಿಸಿದನು.</verse>
				<verse number="37">ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಆರಾಧನೆ ಮಾಡುತ್ತಿರುವಾಗ, ಅದ್ರಮ್ಮೆಲೆಕ್ ಮತ್ತು ಸರೆಚೆರ್ ಎಂಬವರು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ದೇಶಕ್ಕೆ ಪಲಾಯನ ಗೈದರು. ಅವನ ಸ್ಥಾನದಲ್ಲಿ ಅವನ ಮಗ ಏಸರ್ ಹದ್ದೋನನು ಅರಸನಾದನು.</verse>
			</chapter>
			<chapter number="20">
				<verse number="1">ಆ ದಿನಗಳಲ್ಲಿ ಹಿಜ್ಕೀಯನು ಮಾರಕ ರೋಗದಿಂದ ನರಳುತ್ತಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನಿನ್ನ ಸಂಸಾರದ ವಿಷಯವಾಗಿ ವ್ಯವಸ್ಥೆಮಾಡು; ಏಕೆಂದರೆ, ‘ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ,’ ಎಂಬುದಾಗಿ ಸರ್ವೇಶ್ವರ ಹೇಳಿದ್ದಾರೆ,” ಎಂದು ಹೇಳಿದನು.</verse>
				<verse number="2">ಇದನ್ನು ಕೇಳಿದೊಡನೆ ಹಿಜ್ಕೀಯನು ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ,</verse>
				<verse number="3">“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.</verse>
				<verse number="4">ಯೆಶಾಯನು ಅರಮನೆಯ ಮಧ್ಯಪ್ರಾಕಾರವನ್ನು ದಾಟುವುದಕ್ಕೆ ಮೊದಲೇ ಸರ್ವೇಶ್ವರ ಅವನಿಗೆ,</verse>
				<verse number="5">“ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಒಡೆಯನಾಗಿರುವ ಹಿಜ್ಕೀಯನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.</verse>
				<verse number="6">ಅದಲ್ಲದೆ ನಿನ್ನ ಆಯುಷ್ಯಕ್ಕೆ ಹದಿನೈದು ವರ್ಷಗಳನ್ನು ಕೂಡಿಸುತ್ತೇನೆ. ನಿನ್ನನ್ನೂ ಈ ಪಟ್ಟಣವನ್ನೂ ಅಸ್ಸೀರಿಯದ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು. ನನಗಾಗಿ ಹಾಗು ನನ್ನ ದಾಸ ದಾವೀದನಿಗಾಗಿ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು’ ಎಂಬುದಾಗಿ ನಿನ್ನ ಪೂರ್ವಜ ದಾವೀದನ ದೇವರಾಗಿರುವ ಸರ್ವೇಶ್ವರ ಹೇಳುತ್ತಾರೆ ಎಂದು ತಿಳಿಸು,” ಎಂದು ಆಜ್ಞಾಪಿಸಿದರು.</verse>
				<verse number="7">ಯೆಶಾಯನು ಒಂದು ಅಂಜೂರದ ಹಣ್ಣಿನ ಉಂಡೆಯನ್ನು ತರಿಸಿ ಅದನ್ನು ಕುರುವಿನ ಮೇಲೆ ಇಡಿಸಿದಾಗ ಹಿಜ್ಕೀಯನು ಗುಣಹೊಂದಿದನು.</verse>
				<verse number="8">ಹಿಜ್ಕೀಯನು ಯೆಶಾಯನನ್ನು, “ಸರ್ವೇಶ್ವರ ನನ್ನನ್ನು ಗುಣಪಡಿಸುವರೆಂಬುದಕ್ಕೂ ನಾನು ಮೂರನೆ ದಿನ ಅವರ ಆಲಯಕ್ಕೆ ಹೋಗುವೆನೆಂಬುದಕ್ಕೂ ಗುರುತೇನು?” ಎಂದು ಕೇಳಿದನು.</verse>
				<verse number="9">ಅವನು, “ಸರ್ವೇಶ್ವರ ನುಡಿದದ್ದನ್ನು ನೆರವೇರಿಸುವರು ಎಂಬುದಕ್ಕೆ ಸರ್ವೇಶ್ವರನಿಂದ ಗುರುತು ಕೇಳುತ್ತಿರುವೆ; ಹಾಗಾದರೆ ನೆರಳು ಹತ್ತು ಮೆಟ್ಟಲು ಮುಂದೆ ಹೋಗಬೇಕೋ ಹಿಂದೆ ಬರಬೇಕೋ ಹೇಳು,” ಎಂದನು.</verse>
				<verse number="10">ಹಿಜ್ಕೀಯನು, “ನೆರಳು ಮುಂದೆ ಹೋಗುವುದು ಸುಲಭ; ಆದುದರಿಂದ ಹತ್ತು ಮೆಟ್ಟಲು ಹಿಂದೆ ಬರುವಂತೆ ಮಾಡು,” ಎಂದು ಹೇಳಿದನು.</verse>
				<verse number="11">ಆಗ ಪ್ರವಾದಿ ಯೆಶಾಯನು ಸರ್ವೇಶ್ವರನಿಗೆ ಮೊರೆಯಿಡಲು ಅವರು ಆಹಾಜನ ಸೋಪಾನಪಂಕ್ತಿಯಲ್ಲಿ ಹತ್ತು ಮೆಟ್ಟಲು ಮುಂದೆ ಹೋಗಿದ್ದ ನೆರಳನ್ನು ಹಿಂದೆ ಬರಮಾಡಿದರು.</verse>
				<verse number="12">ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬಿಲೋನಿಯದ ಅರಸನೂ ಆದ ಬೆರೋದಕ ಬಲದಾನ ಎಂಬವನು ಹಿಜ್ಕೀಯನು ಅಸ್ವಸ್ಥನಾಗಿದ್ದನೆಂದು ಕೇಳಿ ದೂತರ ಮುಖಾಂತರ ಅವನಿಗೆ ಪತ್ರವನ್ನೂ ಉಡುಗೊರೆಯನ್ನೂ ಕಳುಹಿಸಿದನು.</verse>
				<verse number="13">ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ ಆಯುಧಶಾಲೆಯನ್ನೂ ತನ್ನ ಭಂಡಾರದಲ್ಲಿದ್ದದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲೂ ರಾಜ್ಯದಲ್ಲೂ ಅವರಿಗೆ ತೋರಿಸದಿದ್ದ ವಸ್ತು ಒಂದೂ ಇರಲಿಲ್ಲ.</verse>
				<verse number="14">ಆಗ ಪ್ರವಾದಿ ಯೆಶಾಯನು ಹಿಜ್ಕೀಯನ ಬಳಿಗೆ ಬಂದು, “ಆ ಮನುಷ್ಯರು ಎಲ್ಲಿಯವರು, ಏನು ಹೇಳಿದರು?” ಎಂದು ಕೇಳಿದನು. ಅದಕ್ಕೆ ಹಿಜ್ಕೀಯನು, “ಅವರು ಬಹುದೂರದ ದೇಶವಾದ ಬಾಬಿಲೋನಿನಿಂದ ಬಂದವರು,” ಎಂದು ಉತ್ತರಕೊಟ್ಟನು.</verse>
				<verse number="15">ಯೆಶಾಯನು ಮತ್ತೆ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಹಿಜ್ಕೀಯನು, “ಅರಮನೆಯಲ್ಲಿರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ಒಡವೆ ವಸ್ತು ಒಂದೂ ಇಲ್ಲ,” ಎಂದನು.</verse>
				<verse number="16">ಆಗ ಅವನು ಹಿಜ್ಕೀಯನಿಗೆ, “ಸರ್ವೇಶ್ವರನ ಮಾತನ್ನು ಕೇಳು:</verse>
				<verse number="17">‘ನಿನ್ನ ಪೂರ್ವಜರ ಕಾಲದಿಂದ ಇಂದಿನವರೆಗೆ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವನ್ನು ಬಾಬಿಲೋನಿಯಾಕ್ಕೆ ಕೊಂಡೊಯ್ಯುವ ದಿನ ಬರುವುದು; ಇಲ್ಲೇನೂ ಉಳಿಯುವುದಿಲ್ಲ.</verse>
				<verse number="18">ಬಾಬಿಲೋನಿನ ಅರಸರು ಬಂದು ನೀನು ಪಡೆದ ಮಕ್ಕಳನ್ನು ತೆಗೆದುಕೊಂಡುಹೋಗಿ ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು,’ ಎನ್ನುತ್ತಾರೆ,” ಎಂದು ಹೇಳಿದನು.</verse>
				<verse number="19">‘ನನ್ನ ಜೀವಮಾನದಲ್ಲಿ ಹೇಗೂ ಸೌಭಾಗ್ಯವಿದ್ದರೆ ಸಾಕು’ ಎಂದುಕೊಂಡ ಹಿಜ್ಕೀಯನು ಯೆಶಾಯನಿಗೆ, “ನೀವು ತಿಳಿಸಿದ ಸರ್ವೇಶ್ವರನ ಮಾತು ಹಿತಕರವಾಗಿದೆ,” ಎಂದು ಉತ್ತರಕೊಟ್ಟನು.</verse>
				<verse number="20">ಹಿಜ್ಕೀಯನ ಉಳಿದ ಚರಿತ್ರೆ, ಅವನ ಪರಾಕ್ರಮಕಾರ್ಯ ಹಾಗು ಅವನು ಕೆರೆಕಾಲುವೆಗಳನ್ನು ಮಾಡಿಸಿ ಊರೊಳಗೆ ನೀರನ್ನು ತಂದ ವಿವರ, ಇವು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.</verse>
				<verse number="21">ಅವನು ಮೃತನಾಗಿ ಪಿತೃಗಳ ಬಳಿ ಸೇರಿದನು. ಅವನ ಸ್ಥಾನದಲ್ಲಿ ಅವನ ಮಗ ಮನಸ್ಸೆ ಅರಸನಾದನು.</verse>
			</chapter>
			<chapter number="21">
				<verse number="1">ಮನಸ್ಸೆ ಅರಸನಾದಾಗ ಅವನಿಗೆ ಹನ್ನೆರಡು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಐವತ್ತೈದು ವರ್ಷ ಆಳಿದನು; ಅವನ ತಾಯಿಯ ಹೆಸರು ಹೆಫ್ಚಿಬಾ.</verse>
				<verse number="2">ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.</verse>
				<verse number="3">ತನ್ನ ತಂದೆ ಹಿಜ್ಕೀಯನು ತೆಗೆದುಹಾಕಿದ್ದ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿ ಇಸ್ರಯೇಲರ ಅರಸನಾದ ಅಹಾಬನಂತೆ ಬಾಳ್ ದೇವತೆಗಾಗಿ ಬಲಿಪೀಠಗಳನ್ನು ಕಟ್ಟಿಸಿ, ಅಶೇರ ವಿಗ್ರಹಸ್ತಂಭವನ್ನು ನಿಲ್ಲಿಸಿ, ನಕ್ಷತ್ರಮಂಡಲಕ್ಕೆ ಕೈಮುಗಿದು, ಆರಾಧಿಸಿದನು.</verse>
				<verse number="4">ಸರ್ವೇಶ್ವರ ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆರಿಸಿಕೊಂಡ ಜೆರುಸಲೇಮಿನ ದೇವಾಲಯದ ಎರಡು ಪ್ರಾಕಾರಗಳಲ್ಲಿಯೂ</verse>
				<verse number="5">ಸರ್ವ ನಕ್ಷತ್ರಮಂಡಲಕ್ಕಾಗಿ ಬಲಿಪೀಠಗಳನ್ನು ಕಟ್ಟಿಸಿದನು.</verse>
				<verse number="6">ಇದಲ್ಲದೆ ಅವನು ತನ್ನ ಮಗನನ್ನು ಬಲಿಯಗ್ನಿಪರೀಕ್ಷೆಗೆ ಗುರಿಯಾಗಿಸಿದನು. ಕಣಿ ಹೇಳಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪವನ್ನೆಬ್ಬಿಸಿದನು.</verse>
				<verse number="7">ತಾನು ಮಾಡಿಸಿದ ಅಶೇರ ವಿಗ್ರಹಸ್ತಂಭವನ್ನು ದೇವಾಲಯದಲ್ಲಿ ಇಡಿಸಿದನು. ಸರ್ವೇಶ್ವರ ಆ ಆಲಯದಲ್ಲಿ ದಾವೀದನಿಗೂ ಅವನ ಮಗ ಸೊಲೊಮೋನನಿಗೂ, “ಇಸ್ರಯೇಲರು ತಮಗೆ ಮೋಶೆಯ ಮುಖಾಂತರ ಕೊಡಲಾದ ನನ್ನ ಧರ್ಮಶಾಸ್ತ್ರದ ನಿಬಂಧನೆಗಳನ್ನು ಅನುಸರಿಸಿ ನಡೆಯುವುದಾದರೆ</verse>
				<verse number="8">ನನ್ನ ನಾಮಮಹತ್ತು ಈ ದೇವಾಲಯದಲ್ಲು, ಇಸ್ರಯೇಲರ ಊರುಗಳಲ್ಲು ಹಾಗು ನನಗೆ ಪ್ರಿಯವಾಗಿರುವ ಜೆರುಸಲೇಮಿನಲ್ಲು ಸದಾಕಾಲ ಇರುವುದು. ಇಸ್ರಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿ ಅಲೆದಾಡದೆ ತಮ್ಮ ಪಿತೃಗಳಿಗೆ ಕೊಡಲಾದ ನಾಡಿನಲ್ಲಿಯೇ ವಾಸವಾಗಿರುವಂತೆ ಮಾಡುವೆನು,” ಎಂದು ಹೇಳಿದ್ದರು.</verse>
				<verse number="9">ಆದರೆ ಇಸ್ರಯೇಲರು ಅವರ ಮಾತನ್ನು ಕೇಳದೆ, ಮನಸ್ಸೆಯಿಂದ ಪ್ರೇರಿತರಾಗಿ, ತಮ್ಮ ಮುಂದೆಯೇ ಸರ್ವೇಶ್ವರನಿಂದ ಸಂಹೃತರಾದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.</verse>
				<verse number="10">ಆಗ ಸರ್ವೇಶ್ವರ ತನ್ನ ದಾಸರಾದ ಪ್ರವಾದಿಗಳ ಮುಖಾಂತರ.</verse>
				<verse number="11">“ಯೆಹೂದ್ಯರ ಅರಸನಾದ ಮನಸ್ಸೆಯು, ಹಿಂದೆ ಇದ್ದ ಅಮೋರಿಯರ ಕೃತ್ಯಗಳಿಗಿಂತ ಅಸಹ್ಯವಾದ ಕೃತ್ಯಗಳನ್ನು ನಡೆಸಿದ್ದಾನೆ. ವಿಗ್ರಹಗಳಿಂದ ಯೆಹೂದ್ಯರನ್ನು ಪಾಪಕ್ಕೆ ಪ್ರೇರಿಸಿದ್ದಾನೆ;</verse>
				<verse number="12">ಆದ್ದರಿಂದ ಇಸ್ರಯೇಲ್ ದೇವರಾದ ಸರ್ವೇಶ್ವರ ಎಂಬ ನಾನು ಜೆರುಸಲೇಮಿನವರ ಮೇಲೂ ಜುದೇಯದವರ ಮೇಲೂ ಕೇಡನ್ನು ಬರಮಾಡುವೆನು; ಅದನ್ನು ಕೇಳುವವರ ಎರಡು ಕಿವಿಗಳೂ ಬಿರಿಯುವುವು.</verse>
				<verse number="13">ನೂಲು, ಮಟ್ಟಗೋಲು ಇವುಗಳಿಂದಲೋ ಎಂಬಂತೆ ಸಮಾರಿಯವನ್ನೂ ಅಹಾಬನ ಮನೆಯನ್ನೂ ನೆಲಸಮ ಮಾಡಿಬಿಟ್ಟೆನಲ್ಲವೆ? ಜೆರುಸಲೇಮನ್ನೂ ಅವುಗಳಂತೆಯೇ ಮಾಡುವೆನು. ಒಬ್ಬನು ಪಾತ್ರೆಯನ್ನು ಉಜ್ಜಿ ತಲೆ ಕೆಳಗಾಗಿ ಇಡುವಂತೆ ನಾನು ಜೆರುಸಲೇಮನ್ನು ಉಜ್ಜಿ ತಲೆ ಕೆಳಗಾಗಿ ಮಾಡುವೆನು.</verse>
				<verse number="14">ನನ್ನ ಪ್ರಜೆಗಳಲ್ಲಿ ಉಳಿದಿರುವವರನ್ನು ತಳ್ಳಿಬಿಟ್ಟು ಶತ್ರುಗಳ ಕೈಗೆ ಒಪ್ಪಿಸುವೆನು. ಅವರ ಶತ್ರುಗಳೆಲ್ಲಾ ಬಂದು ಅವರನ್ನು ಸುಲಿದು ಸೂರೆಮಾಡುವರು.</verse>
				<verse number="15">ಅವರು ಈಜಿಪ್ಟ್ ದೇಶವನ್ನು ಬಿಟ್ಟುಬಂದ ಪಿತೃಗಳ ಕಾಲ ಮೊದಲ್ಗೊಂಡು ಇಂದಿನವರೆಗೂ ತಮ್ಮ ಪಾಪಗಳಿಂದ ನನ್ನನ್ನು ರೇಗಿಸುತ್ತಾ ಬಂದದ್ದೇ ಇದಕ್ಕೆ ಕಾರಣ,” ಎಂದು ಹೇಳಿಸಿದರು.</verse>
				<verse number="16">ಮನಸ್ಸೆಯು ಯೆಹೂದ್ಯರನ್ನು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡಲು ಪ್ರೇರಿಸಿದ್ದಲ್ಲದೆ, ನಿರಪರಾಧಿಗಳ ವಧೆಯಿಂದ ಜೆರುಸಲೇಮನ್ನೆಲ್ಲಾ ರಕ್ತಮಯವಾಗಿಸಿದನು.</verse>
				<verse number="17">ಮನಸ್ಸೆಯ ಉಳಿದ ಚರಿತ್ರೆ ಅವನ ಕಾರ್ಯಕಲಾಪಗಳು ಹಾಗು ಅವನು ಮಾಡಿದ ಪಾಪಕೃತ್ಯಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.</verse>
				<verse number="18">ಅವನು ಸತ್ತು ಪಿತೃಗಳ ಬಳಿ ಸೇರಿದಾಗ ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿ ಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಮೋನನು ಅರಸನಾದನು.</verse>
				<verse number="19">ಆಮೋನನು ಅರಸನಾದಾಗ ಇಪ್ಪತ್ತೆರಡು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಎರಡು ವರ್ಷ ಆಳಿದನು. ಯೊಟ್ಟಾ ಊರಿನವಳೂ ಹಾರೂಚನ ಮಗಳೂ ಆದ ಮೆಷುಲ್ಲೆಮೆತ್ ಎಂಬಾಕೆ ಅವನ ತಾಯಿ.</verse>
				<verse number="20">ಅವನು ತನ್ನ ತಂದೆ ಮನಸ್ಸೆಯ ದುರ್ಮಾರ್ಗದಲ್ಲೇ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.</verse>
				<verse number="21">ತನ್ನ ಪೂರ್ವಜರ ದೇವರಾದ ಸರ್ವೇಶ್ವರನನ್ನೂ ಅವರು ಮೆಚ್ಚುವ ಮಾರ್ಗವನ್ನೂ ಬಿಟ್ಟು ತನ್ನ ತಂದೆಯ ಮಾರ್ಗದಲ್ಲೇ ನಡೆದನು.</verse>
				<verse number="22">ಅವನು ಪೂಜಿಸಿದ ವಿಗ್ರಹಗಳನ್ನು ತಾನೂ ಪೂಜಿಸಿ ಅವುಗಳಿಗೆ ಅಡ್ಡಬಿದ್ದನು.</verse>
				<verse number="23">ಅವನ ಸೇವಕರು ಅವನಿಗೆ ವಿರುದ್ಧ ಒಳಸಂಚು ಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದರು.</verse>
				<verse number="24">ಆದರೆ ನಾಡಿನ ಜನರು ಒಳಸಂಚು ಮಾಡಿದವರನ್ನೆಲ್ಲಾ ಕೊಂದುಹಾಕಿ ಆಮೋನನಿಗೆ ಬದಲಾಗಿ ಅವನ ಮಗ ಯೋಷೀಯನನ್ನು ಅರಸನನ್ನಾಗಿ ಮಾಡಿದರು.</verse>
				<verse number="25">ಆಮೋನನ ಉಳಿದ ಚರಿತ್ರೆ ಹಾಗು ಅವನ ಕೃತ್ಯಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.</verse>
				<verse number="26">ಅವನ ಶವವನ್ನು ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅಲ್ಲಿ ಅವನು ಮೊದಲೇ ತನಗಾಗಿ ಒಂದು ಸಮಾಧಿಯನ್ನು ಸಿದ್ಧಪಡಿಸಿಟ್ಟಿದ್ದನು. ಅವನ ಸ್ಥಾನದಲ್ಲಿ ಅವನ ಮಗ ಯೋಷೀಯನು ಅರಸನಾದನು.</verse>
			</chapter>
			<chapter number="22">
				<verse number="1">ಯೋಷೀಯನು ಅರಸನಾದಾಗ ಅವನಿಗೆ ಎಂಟು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಅವನು ಆಳಿದ್ದು ಮೂವತ್ತೊಂದು ವರ್ಷ. ಬೊಚ್ಕತೂರಿನವಳೂ ಅದಾಯನ ಮಗಳೂ ಆದ ಯೆದೀದಾ ಎಂಬಾಕೆ ಅವನ ತಾಯಿ.</verse>
				<verse number="2">ಅವನು ಎಡಕ್ಕಾಗಲಿ ಬಲಕ್ಕಾಗಲಿ ವಾಲದೆ ತನ್ನ ಪೂರ್ವಜ ದಾವೀದನ ಮಾರ್ಗದಲ್ಲಿ ನೇರವಾಗಿ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.</verse>
				<verse number="3">ಯೋಷೀಯನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಚೆಲ್ಯನ ಮಗನೂ ಮೆಷುಲ್ಲಾಮನ ಮೊಮ್ಮಗನೂ ಆದ ಶಾಫಾನನೆಂಬ ಲೇಖಕನನ್ನು ಕರೆದು,</verse>
				<verse number="4">“ನೀನು ಪ್ರಧಾನ ಯಾಜಕ ಹಿಲ್ಕೀಯನ ಬಳಿಗೆ ಹೋಗಿ ಅವನಿಗೆ, ‘ದ್ವಾರಪಾಲಕರು ಸರ್ವೇಶ್ವರನ ಆಲಯಕ್ಕೆ ಬರುವ ಜನರಿಂದ ಸಂಗ್ರಹಿಸಿದ ಹಣವನ್ನು ಲೆಕ್ಕಮಾಡಿ ಆಲಯದ ಕೆಲಸ ಮಾಡಿಸುವ ಮೇಸ್ತ್ರಿಗಳಿಗೆ ಅದನ್ನು ಒಪ್ಪಿಸು,’ ಎಂದು ಹೇಳು.</verse>
				<verse number="5">ಮೇಸ್ತ್ರಿಗಳು ಅದನ್ನು ಸರ್ವೇಶ್ವರನ ಆಲಯದ ದುರಸ್ತುಮಾಡುವ ಬಡಗಿ, ಶಿಲ್ಪಿ, ಉಪ್ಪಾರ, ಮೊದಲಾದವರ ಸಂಬಳಕ್ಕಾಗಿಯೂ ದೇವಾಲಯಕ್ಕೆ ಬೇಕಾದ ಮರ, ಕೆತ್ತಿದ ಕಲ್ಲು, ಇವುಗಳನ್ನು ಕೊಂಡುಕೊಳ್ಳುವುದಕ್ಕಾಗಿಯೂ ಉಪಯೋಗಿಸಲಿ.</verse>
				<verse number="6"></verse>
				<verse number="7">ಅವರು ನಂಬಿಗಸ್ತರಾಗಿರುವುದರಿಂದ ಅವರ ವಶಕ್ಕೆ ಕೊಡಲಾಗುವ ಹಣದ ಲೆಕ್ಕವನ್ನು ಕೇಳಬಾರದು,” ಎಂದು ಆಜ್ಞಾಪಿಸಿ ಅವನನ್ನು ಸರ್ವೇಶ್ವರನ ಆಲಯಕ್ಕೆ ಕಳುಹಿಸಿದನು.</verse>
				<verse number="8">ಪ್ರಧಾನ ಯಾಜಕ ಹಿಲ್ಕೀಯನು ಲೇಖಕ ಶಾಫಾನನಿಗೆ, “ಸರ್ವೇಶ್ವರನ ಆಲಯದಲ್ಲಿ ನನಗೆ ಧರ್ಮೋಪದೇಶ ಗ್ರಂಥವು ಸಿಕ್ಕಿರುತ್ತದೆ,” ಎಂದು ಹೇಳಿ ಅದನ್ನು ಅವನ ಕೈಯಲ್ಲಿ ಕೊಟ್ಟನು; ಶಾಫಾನನು ಓದಿದನು.</verse>
				<verse number="9">ಅನಂತರ ಅವನು ಹಿಂದಿರುಗಿ ಅರಸನ ಬಳಿಗೆ ಹೋಗಿ, “ನಿಮ್ಮ ಸೇವಕರು ದೇವಾಲಯಲ್ಲಿ ಸಂಗ್ರಹವಾದ ಹಣವನ್ನು ತೆಗೆದು ದೇವಾಲಯದ ಕೆಲಸವನ್ನು ಮಾಡಿಸುವ ಮೇಸ್ತ್ರಿಗಳಿಗೆ ಒಪ್ಪಿಸಿದರು;</verse>
				<verse number="10">ಇದಲ್ಲದೆ ಯಾಜಕ ಹಿಲ್ಕೀಯನು ನನಗೆ ಒಂದು ಗ್ರಂಥವನ್ನು ಕೊಟ್ಟಿದ್ದಾನೆ,” ಎಂದು ಹೇಳಿ ಅದನ್ನು ಅರಸನ ಮುಂದೆ ಓದಿದನು.</verse>
				<verse number="11">ಅರಸನು ಧರ್ಮೋಪದೇಶ ಗ್ರಂಥವಾಕ್ಯಗಳನ್ನು ಕೇಳಿದಾಗ,</verse>
				<verse number="12">ದುಃಖಾವೇಶದಿಂದ ಬಟ್ಟೆಗಳನ್ನು ಹರಿದುಕೊಂಡು, ಯಾಜಕ ಹಿಲ್ಕೀಯನು ಶಾಫಾನನ ಮಗ ಅಹೀಕಾಮ್, ಮೀಕಾಯನ ಮಗ ಅಕ್ಬೋರ್, ಲೇಖಕ ಶಾಫಾನ್ ಹಾಗು ತನ್ನ ಹಸ್ತಕನಾದ ಅಸಾಯ ಎಂಬುವರಿಗೆ,</verse>
				<verse number="13">“ನಮ್ಮ ಪೂರ್ವಜರು ನಮಗೆ ಸಿಕ್ಕಿರುವ ಈ ಗ್ರಂಥವಾಕ್ಯಗಳಿಗೆ ಕಿವಿಗೊಡದೆ ಹಾಗು ಅವುಗಳನ್ನು ಕೈಕೊಳ್ಳದೆಹೋದುದರಿಂದ ಸರ್ವೇಶ್ವರನ ಉಗ್ರಕೋಪಕ್ಕೆ ಪಾತ್ರರಾಗಿದ್ದೇವೆ. ಆದುದರಿಂದ ನೀವು ನನಗಾಗಿ ಜನರಿಗಾಗಿ ಹಾಗು ಎಲ್ಲಾ ಯೆಹೂದ್ಯರಿಗಾಗಿ ಸರ್ವೇಶ್ವರನ ಬಳಿಗೆ ಹೋಗಿ ಈ ಗ್ರಂಥವಾಕ್ಯಗಳ ವಿಷಯವಾಗಿ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.</verse>
				<verse number="14">ಆಗ ಯಾಜಕ ಹಿಲ್ಕೀಯನು, ಅಹೀಕಾಮ್, ಅಕ್ಬೋರ್, ಶಾಫಾನ್, ಅಸಾಯ ಎಂಬವರು ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ ಆಕೆಯ ಹತ್ತಿರ ವಿಚಾರಿಸಿದರು. ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಈಕೆಯ ಗಂಡನು. ಈಕೆ ಜೆರುಸಲೇಮಿನ ಎರಡನೇ ಕೇರಿಯಲ್ಲಿ ವಾಸವಾಗಿದ್ದಳು.</verse>
				<verse number="15">ಹುಲ್ದಳು ಅವರಿಗೆ, “ನಿಮ್ಮನ್ನು ಕಳುಹಿಸಿದವರಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಮಾತುಗಳನ್ನು ತಿಳಿಸಿರಿ;</verse>
				<verse number="16">‘ಈ ನಾಡಿನ ಮೇಲೆ ಹಾಗು ಜನರ ಮೇಲೆ ಜುದೇಯದ ಅರಸನು ಓದಿಸಿದ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಿಕ್ಷೆಯನ್ನು ಬರಮಾಡುವೆನು.</verse>
				<verse number="17">ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿಯೆತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯಹತ್ತಿ ಆರಿಹೋಗುವುದೇ ಇಲ್ಲ,’ ಎನ್ನುತ್ತಾರೆ ಸರ್ವೇಶ್ವರ.</verse>
				<verse number="18">ತಾನು ಕೇಳಿದ ವಾಕ್ಯಗಳ ವಿಷಯವಾಗಿ ಸರ್ವೇಶ್ವರನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಜುದೇಯದ ಅರಸರಿಗೆ ನೀವು ತಿಳಿಸಬೇಕಾದ ಇಸ್ರಯೇಲ್ ದೇವರಾದ ಸರ್ವೇಶ್ವರನ ಮಾತು ಏನೆಂದರೆ,</verse>
				<verse number="19">‘ನಾನು ಈ ನಾಡನ್ನೂ ನಿವಾಸಿಗಳನ್ನೂ ಶಾಪವಿಸ್ಮಯಗಳಿಗೆ ಗುರಿಮಾಡುವೆನೆಂಬುದನ್ನು ನೀನು ಕೇಳಿದಾಗ, ದುಃಖಪಟ್ಟು ನನ್ನ ಮುಂದೆ ತಗ್ಗಿಸಿಕೊಂಡದ್ದರಿಂದಲೂ, ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದ್ದರಿಂದಲೂ ನಿನ್ನನ್ನು ಲಕ್ಷಿಸಿದೆನು.</verse>
				<verse number="20">ನಾನು ಈ ನಾಡಿಗೆ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು,’ ಎಂಬುದಾಗಿ ತಿಳಿಸಿರಿ,” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.</verse>
			</chapter>
			<chapter number="23">
				<verse number="1">ಅನಂತರ ಅರಸನು ದೂತರ ಮುಖಾಂತರ ಜೆರುಸಲೇಮಿನ ಮತ್ತು ಜುದೇಯ ಪ್ರಾಂತ್ಯದ ಬೇರೆ ಎಲ್ಲಾ ಊರುಗಳ ಹಿರಿಯರನ್ನು ತನ್ನ ಬಳಿಗೆ ಕರೆಯಿಸಿದನು.</verse>
				<verse number="2">ಜೆರುಸಲೇಮಿನವರನ್ನೂ ಪ್ರವಾದಿಗಳನ್ನೂ ಬೇರೆ ಎಲ್ಲಾ ಯೆಹೂದ್ಯರನ್ನೂ ಯಾಜಕರನ್ನೂ ಪ್ರವಾದಿಗಳನ್ನೂ ಕರೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು. ಚಿಕ್ಕವರೂ ದೊಡ್ಡವರೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.</verse>
				<verse number="3">ಕಂಬದ ಬಳಿಯಲ್ಲಿ ನಿಂತು ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಸರ್ವೇಶ್ವರನಿಗೆ ಪ್ರಮಾಣ ಮಾಡಿದನು. ಎಲ್ಲಾ ಜನರೂ ಹಾಗೆಯೇ ಪ್ರಮಾಣ ಮಾಡಿದರು.</verse>
				<verse number="4">ತರುವಾಯ ಅವನು ಪ್ರಧಾನ ಯಾಜಕ ಹಿಲ್ಕೀಯನ, ಮುಖ್ಯ ಯಾಜಕರ ಹಾಗು ದ್ವಾರಪಾಲಕರ ಮುಖಾಂತರ ಬಾಳ್, ಅಶೇರ ಎಂಬ ದೇವತೆಗಳಿಗಾಗಿ ಹಾಗು ಆಕಾಶಸೈನ್ಯಗಳಿಗಾಗಿ ಉಪಯೋಗಿಸುತ್ತಿದ್ದ ಎಲ್ಲಾ ವಸ್ತುಗಳನ್ನು ಸರ್ವೇಶ್ವರನ ಆಲಯದಿಂದ ತರಿಸಿ, ಜೆರುಸಲೇಮಿನ ಹೊರಗಿರುವ ಕಿದ್ರೋನ್ ಬೈಲಿನಲ್ಲಿ ಅವುಗಳನ್ನು ಸುಡಿಸಿ, ಆ ಬೂದಿಯನ್ನು ಬೇತೇಲಿಗೆ ಕಳುಹಿಸಿದನು.</verse>
				<verse number="5">ಅದಲ್ಲದೆ, ಜುದೇಯ ಪ್ರಾಂತ್ಯದ ಪಟ್ಟಣಗಳಲ್ಲೂ ಜೆರುಸಲೇಮಿನ ಸುತ್ತಣ ಪ್ರದೇಶದಲ್ಲೂ ಇದ್ದ ಪೂಜಾಸ್ಥಳಗಳ ವಿಗ್ರಹಗಳಿಗೂ ಬಾಳ್ ದೇವತೆಗೂ ಸೂರ್ಯ ಚಂದ್ರ ನಕ್ಷತ್ರಗಳೆನಿಸಿಕೊಳ್ಳುವ ಆಕಾಶಸೈನ್ಯಕ್ಕೂ ಧೂಪಾರತಿಯೆತ್ತುವುದಕ್ಕಾಗಿ ಜುದೇಯದ ರಾಜರಿಂದ ನೇಮಿತರಾಗಿದ್ದ ಎಲ್ಲಾ ಪೂಜಾರಿಗಳನ್ನು ತೆಗೆದುಹಾಕಿದನು.</verse>
				<verse number="6">ಸರ್ವೇಶ್ವರನ ಆಲಯದಲ್ಲಿದ್ದ ಅಶೇರವಿಗ್ರಹಸ್ತಂಭವನ್ನು ತರಿಸಿ, ಜೆರುಸಲೇಮಿನ ಹೊರಗಿರುವ ಕಿದ್ರೋನ್ ಹಳ್ಳಕ್ಕೆ ತೆಗೆದುಕೊಂಡು ಹೋಗಿ, ಅಲ್ಲಿ ಅದನ್ನು ಸುಡಿಸಿ, ಪುಡುಪುಡಿಮಾಡಿಸಿ, ಆ ಪುಡಿಯನ್ನು ಸಾರ್ವಜನಿಕ ಸ್ಮಶಾನದಲ್ಲಿ ಹಾಕಿಸಿದನು.</verse>
				<verse number="7">ಸರ್ವೇಶ್ವರನ ಆಲಯದ ಪ್ರಾಕಾರದೊಳಗಿದ್ದ ವೇಶ್ಯಾವೃತ್ತಿಯವರ ಮನೆಗಳನ್ನು ಕೆಡವಿಸಿದನು. ಆ ಮನೆಗಳಲ್ಲಿ ಸ್ತ್ರೀಯರು ಅಶೇರ ದೇವತೆಗಾಗಿ ಬಟ್ಟೆಬರೆಗಳನ್ನು ನೇಯುತ್ತಿದ್ದರು.</verse>
				<verse number="8">ಅನಂತರ ಗೆಬದಿಂದ ಬೇರ್ಷೆಬದವರೆಗಿರುವ ಜುದೇಯದ ಪಟ್ಟಣಗಳ ಯಾಜಕರನ್ನೆಲ್ಲಾ ಕರೆಯಿಸಿಕೊಂಡು ಅವರು ಧೂಪಸುಡುತ್ತಿದ್ದ ಪೂಜಾಸ್ಥಳಗಳನ್ನು ಹೊಲೆಮಾಡಿದನು. ಪುರಾಧಿಕಾರಿ ಯೆಹೋಶುವನ ಬಾಗಿಲಿನ ಎಡಗಡೆಯಲ್ಲಿದ್ದ ದ್ವಾರದೇವತೆಗಳ ಪೂಜಾ ಸ್ಥಳಗಳನ್ನು ಕೆಡವಿಬಿಟ್ಟನು.</verse>
				<verse number="9">ಆ ಪೂಜಾಸ್ಥಳಗಳಿಂದ ಬಂದ ಯಾಜಕರಿಗೆ, ಇತರ ಯಾಜಕರೊಡನೆ ಹುಳಿಯಿಲ್ಲದ ರೊಟ್ಟಿಗಳಲ್ಲಿ ಪಾಲುಸಿಕ್ಕುತ್ತಿದ್ದರೂ ಜೆರುಸಲೇಮಿನಲ್ಲಿ ಇದ್ದ ಸರ್ವೇಶ್ವರನ ಬಲಿಪೀಠದ ಸಮೀಪಕ್ಕೆ ಹೋಗುವುದಕ್ಕೆ ಅಪ್ಪಣೆಯಿರಲಿಲ್ಲ.</verse>
				<verse number="10">ತಮ್ಮ ಗಂಡುಹೆಣ್ಣುಮಕ್ಕಳನ್ನು ಯಾರೂ ಮೋಲೆಕನಿಗಾಗಿ ಬಲಿಯಗ್ನಿಪರೀಕ್ಷೆಗೆ ಈಡುಮಾಡದಂತೆ ಬೆನ್ಹಿನ್ನೋಮ್ ಕಣಿವೆಯಲ್ಲಿದ್ದ ತೋಫೆತ್ ಎಂಬ ಸ್ಥಳವನ್ನು ಹೊಲೆಮಾಡಿದನು.</verse>
				<verse number="11">ಜುದೇಯದ ರಾಜರು ಸೂರ್ಯದೇವತೆಗಾಗಿ ಪ್ರತಿಷ್ಠಿಸಿದ್ದ ಕುದುರೆಗಳನ್ನು ತೆಗೆದುಹಾಕಿ ರಥಗಳನ್ನು ಸುಡಿಸಿಬಿಟ್ಟನು. ಅವು ಸರ್ವೇಶ್ವರನ ಆಲಯದ ಕಂಚುಕಿಯಾದ ನಾತಾನ್ ಮೆಲೆಕನ ಕೋಣೆಯ ಹತ್ತಿರ ಇಡಲಾಗಿದ್ದವು.</verse>
				<verse number="12">ಇದಲ್ಲದೆ ಜುದೇಯದ ಅರಸರು ದೇವಸ್ಥಾನದ ಮಾಳಿಗೆಯ ಮೇಲೆ ಆಹಾಜನ ಉಪ್ಪರಿಗೆಯ ಹತ್ತಿರ ಕಟ್ಟಿಸಿದ್ದ ಬಲಿಪೀಠಗಳನ್ನು ಹಾಗು ಮನಸ್ಸೆಯು ಸರ್ವೇಶ್ವರನ ಆಲಯದ ಎರಡು ಪ್ರಾಕಾರಗಳಲ್ಲಿ ಕಟ್ಟಿಸಿದ್ದ ಬಲಿಪೀಠಗಳನ್ನು ಕೆಡವಿ ಪುಡಿಪುಡಿಮಾಡಿ ಅವುಗಳ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು.</verse>
				<verse number="13">ಇಸ್ರಯೇಲರ ಅರಸ ಸೊಲೊಮೋನನು ಸಿದೋನ್ಯರ ಅಷ್ಟೋರೆತ್, ಮೋವಾಬ್ಯರ ಕೆಮೋಷ್, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹಗಳಿಗಾಗಿ ಜೆರುಸಲೇಮಿನ ಎದುರಿನಲ್ಲೂ ಎಘ್ನಪರ್ವತದ ದಕ್ಷಿಣದಿಕ್ಕಿನಲ್ಲೂ ಸ್ಥಾಪಿಸಿದ ಪೂಜಾಸ್ಥಳಗಳನ್ನು ಇವನು ಹೊಲೆಮಾಡಿದನು.</verse>
				<verse number="14">ಕಲ್ಲುಗಂಬಗಳನ್ನು ಒಡೆದುಹಾಕಿ, ಅಶೇರ ವಿಗ್ರಹಸ್ತಂಭಗಳನ್ನು ಕಡಿದುಬಿಟ್ಟು, ಅವುಗಳಿದ್ದ ಸ್ಥಳವನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.</verse>
				<verse number="15">ಇದಲ್ಲದೆ ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗ ಯಾರೊಬ್ಬಾಮನು ಬೇತೇಲಿನಲ್ಲಿ ಏರ್ಪಡಿಸಿದ ಪೂಜಾಸ್ಥಳವನ್ನೂ ಅದರಲ್ಲಿದ್ದ ಬಲಿಪೀಠವನ್ನೂ ಕೆಡವಿಬಿಟ್ಟನು. ಪೂಜಾಸ್ಥಳವನ್ನೂ ಅದರಲ್ಲಿದ್ದ ಅಶೇರ ವಿಗ್ರಹಸ್ತಂಭವನ್ನೂ ಸುಟ್ಟು ಬೂದಿಮಾಡಿದನು.</verse>
				<verse number="16">ಅವನು ಹಿಂದಿರುಗಿ ನೋಡಿದಾಗ ಅಲ್ಲಿನ ಗುಡ್ಡದಲ್ಲಿ ಸಮಾಧಿಗಳನ್ನು ಕಂಡು ಅವುಗಳಲ್ಲಿದ್ದ ಎಲುಬುಗಳನ್ನು ತರಿಸಿ, ಆ ಬಲಿಪೀಠದ ಮೇಲೆ ಸುಡಿಸಿ ಅದನ್ನು ಹೊಲೆಮಾಡಿದನು. ಹೀಗೆ ದೈವಪುರುಷನೊಬ್ಬನು ಪ್ರಕಟಿಸಿದ ಸರ್ವೇಶ್ವರನ ವಾಕ್ಯ ನೆರವೇರಿತು.</verse>
				<verse number="17">ಇದಲ್ಲದೆ, ಅವನು ಒಂದು ಸಮಾಧಿ ಶಿಲೆಯನ್ನು ಕಂಡು ಅದೇನೆಂದು ವಿಚಾರಿಸಿದನು. ಆ ಊರಿನವರು, “ನೀವು ಈಗ ಬೇತೇಲಿನ ಬಲಿಪೀಠಕ್ಕೆ ಮಾಡಿದ್ದನ್ನು ಮುಂತಿಳಿಸಿದ್ದ ಜುದೇಯ ನಾಡಿನವನಾದ ದೈವಪುರುಷನ ಸಮಾಧಿ ಇದು,” ಎಂದು ಉತ್ತರಕೊಟ್ಟನು.</verse>
				<verse number="18">ಆಗ ಅವನು, “ಬಿಡಿ, ಆ ಪುರುಷನ ಎಲುಬುಗಳನ್ನು ಯಾರೂ ಮುಟ್ಟಬಾರದು,” ಎಂದು ಹೇಳಿದನು. ಆದುದರಿಂದ ಅವರು ಅವನ ಮತ್ತು ಸಮಾರಿಯ ನಾಡಿನ ಪ್ರವಾದಿಯ ಎಲುಬುಗಳನ್ನು ಮುಟ್ಟಲಿಲ್ಲ.</verse>
				<verse number="19">ಇಸ್ರಯೇಲ್ ರಾಜರು ಸಮಾರಿಯ ಪಟ್ಟಣಗಳಲ್ಲಿ ಕಟ್ಟಿಸಿದಂಥ ಹಾಗು ಸರ್ವೇಶ್ವರನ ಕೋಪಕ್ಕೆ ಕಾರಣವಾಗಿದ್ದಂಥ ಪೂಜಾಸ್ಥಳಗಳಲ್ಲಿದ್ದ ಗುಡಿಗಳಿಗೆ ಬೇತೇಲಿಗಾದ ಗತಿಯೇ ಆಯಿತು.</verse>
				<verse number="20">ಯೋಷೀಯನು ಅವುಗಳನ್ನು ಕೆಡವಿಬಿಟ್ಟು, ಅವುಗಳ ಪೂಜಾರಿಗಳನ್ನು ಬಲಿಪೀಠಗಳ ಮೇಲೆ ವಧಿಸಿ ಮನುಷ್ಯರ ಎಲುಬುಗಳನ್ನು ಅವುಗಳ ಮೇಲೆ ಸುಡಿಸಿ ಜೆರುಸಲೇಮಿಗೆ ಹಿಂದಿರುಗಿ ಹೋದನು.</verse>
				<verse number="21">ಅನಂತರ ಅರಸನು ಜನರೆಲ್ಲರಿಗೆ, ನಿಬಂಧನ ಗ್ರಂಥದಲ್ಲಿ ಬರೆದಿರುವ ಪ್ರಕಾರ ನೀವು ನಿಮ್ಮ ದೇವರಾದ ಸರ್ವೇಶ್ವರನಿಗೋಸ್ಕರ ಪಾಸ್ಕಹಬ್ಬವನ್ನು ಆಚರಿಸಬೇಕು ಎಂದು ಆಜ್ಞಾಪಿಸಿದನು.</verse>
				<verse number="22">ಇಂಥ ಪಾಸ್ಕಹಬ್ಬವು ಇಸ್ರಯೇಲರನ್ನು ಪಾಲಿಸಿದ ನ್ಯಾಯಸ್ಥಾಪಕರ ಕಾಲದಲ್ಲಾಗಲಿ ಇಸ್ರಯೇಲರ ಮತ್ತು ಜುದೇಯದ ಅರಸರ ಕಾಲದಲ್ಲಾಗಲಿ ನಡೆದಿರಲಿಲ್ಲ.</verse>
				<verse number="23">ಈ ಹಬ್ಬವನ್ನು ಅರಸ ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಜೆರುಸಲೇಮಿನಲ್ಲಿ ಸರ್ವೇಶ್ವರನಿಗೋಸ್ಕರ ಆಚರಿಸಲಾಯಿತು.</verse>
				<verse number="24">ಇದಲ್ಲದೆ, ಅವನು ಭೂತಪ್ರೇತಗಳನ್ನು ವಿಚಾರಿಸುವವರನ್ನೂ ಬೈತಾಳಿಕರನ್ನೂ ಜೆರುಸಲೇಮ್, ಜುದೇಯ ಪ್ರಾಂತ್ಯಗಳಲ್ಲಿದ್ದ ಎಲ್ಲಾ ತೆರಫೀಮ್ ಎಂಬ ಮನೆದೇವರುಗಳು, ಮೂರ್ತಿಗಳು ಹಾಗು ಎಲ್ಲ ಅಸಹ್ಯ ವಿಗ್ರಹಗಳನ್ನು ತೆಗೆದುಹಾಕಿ, ಯಾಜಕ ಹಿಲ್ಕೀಯನಿಗೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ಧರ್ಮೋಪದೇಶ ಗ್ರಂಥದ ವಾಕ್ಯಗಳನ್ನು ನೆರವೇರಿಸಿದನು.</verse>
				<verse number="25">ಸರ್ವೇಶ್ವರನಿಗೆ ಅಭಿಮುಖನಾಗಿ, ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಈ ಯೋಷೀಯನಿಗೆ ಸಮಾನನಾದ ಅರಸನು ಹಿಂದೆಯೂ ಅನಂತರವೂ ಇರಲಿಲ್ಲ.</verse>
				<verse number="26">ಆದರೂ ಮನಸ್ಸೆಯ ದುಷ್ಕೃತ್ಯಗಳ ನಿಮಿತ್ತ ಯೆಹೂದ್ಯರ ಮೇಲಿದ್ದ ಸರ್ವೇಶ್ವರನ ಉಗ್ರಕೋಪ ಇಳಿದಿರಲಿಲ್ಲ.</verse>
				<verse number="27">ಸರ್ವೇಶ್ವರ, “ಇಸ್ರಯೇಲರನ್ನು ತೆಗೆದುಹಾಕಿದಂತೆ ಯೆಹೂದ್ಯರನ್ನೂ ನನ್ನ ಸನ್ನಿಧಿಯಿಂದ ತೆಗೆದುಹಾಕುವೆನು; ನಾನು ಆರಿಸಿಕೊಂಡ ಜೆರುಸಲೇಮ್ ಪಟ್ಟಣವನ್ನೂ ನನ್ನ ನಾಮಮಹತ್ತಿಗಾಗಿ ಸ್ವೀಕರಿಸಿಕೊಂಡಾ ದೇವಾಲಯವನ್ನೂ ತಿರಸ್ಕರಿಸುವೆನು,” ಎಂದು ಹೇಳಿದರು.</verse>
				<verse number="28">ಯೋಷೀಯನ ಉಳಿದ ಚರಿತ್ರೆ ಹಾಗು ಅವನ ಕಾರ್ಯಕಲಾಪಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.</verse>
				<verse number="29">ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ವಿರುದ್ಧ ಯುದ್ಧಮಾಡುವುದಕ್ಕಾಗಿ ಯೂಫ್ರಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು, ಕೂಡಲೆ ಅವನಿಂದ ಹತನಾದನು.</verse>
				<verse number="30">ಅವನ ಸೇವಕರು ಅವನ ಶವವನ್ನು ರಥದಲ್ಲಿ ಹಾಕಿಕೊಂಡು ಮೆಗಿದ್ದೋವಿನಿಂದ ಜೆರುಸಲೇಮಿಗೆ ತಂದು ಅವನ ಸ್ವಂತ ಸಮಾಧಿಯಲ್ಲಿ ಇಟ್ಟರು. ಜನರು ಅವನ ಸ್ಥಾನದಲ್ಲಿ ಅವನ ಮಗ ಯೆಹೋವಾಹಾಜನನ್ನು ಅಭಿಷೇಕಿಸಿ ಅರಸನನ್ನಾಗಿ ಮಾಡಿದರು.</verse>
				<verse number="31">ಯೆಹೋವಾಹಾಜನು ಅರಸನಾದಾಗ ಅವನಿಗೆ ಇಪ್ಪತ್ತಮೂರು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಲಿಬ್ನದವಳೂ ಯೆರೆಮೀಯನ ಮಗಳೂ ಆದ ಹಮೂಟಲ್ ಎಂಬಾಕೆ ಇವನ ತಾಯಿ.</verse>
				<verse number="32">ಇವನು ತನ್ನ ಪೂರ್ವಜರಂತೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.</verse>
				<verse number="33">ಫರೋಹ ನೆಕೋವನು ಇವನನ್ನು ಜೆರುಸಲೇಮಿನಲ್ಲಿ ಬಹುದಿನಗಳವರೆಗೆ ಆಳಗೊಡಲಿಲ್ಲ. ಅವನು ಹಮಾತ್ ದೇಶದ ದಿಬ್ಲಾ ಎಂಬ ಊರಲ್ಲಿ ಇವನನ್ನು ಸೆರೆಯಲ್ಲಿಟ್ಟನು. ಯೆಹೂದ್ಯರು ಅವನಿಗೆ ಮೂರು ಸಾವಿರದ ನಾಲ್ಕುನೂರು ಕಿಲೋಗ್ರಾಂ ಬೆಳ್ಳಿಯನ್ನೂ ಮೂವತ್ತನಾಲ್ಕು ಕಿಲೋಗ್ರಾಂ ಬಂಗಾರವನ್ನೂ ದಂಡ ತೆರಬೇಕಾಯಿತು.</verse>
				<verse number="34">ಫರೋಹ ನೆಕೋವನು, ಯೋಷೀಯನಿಗೆ ಬದಲಾಗಿ ಅವನ ಮಗ ಎಲ್ಯಾಕೀಮನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೊಸ ಹೆಸರನ್ನಿಟ್ಟು, ಯೆಹೋವಾಹಾಜನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡು ಹೋದನು; ಯೆಹೋವಾಹಾಜನು ಅಲ್ಲೆ ಮೃತನಾದನು.</verse>
				<verse number="35">ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿಬಂಗಾರವನ್ನು ಕೊಡುವುದಕ್ಕಾಗಿ ಯೆಹೋಯಾಕೀಮನು ತನ್ನ ನಾಡಿನಲ್ಲಿ ತೆರಿಗೆಯನ್ನು ವಿಧಿಸಿದನು. ತೆರಿಗೆ ಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿಬಂಗಾರವನ್ನು ನಾಡಿನ ಜನರಿಂದ ಕೂಡಿಸಿ ಫರೋಹನಿಗೆ ತಂದೊಪ್ಪಿಸಿದನು.</verse>
				<verse number="36">ಯೆಹೋಯಾಕೀಮನು ಅರಸನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸು. ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ರೂಮದವಳೂ ಪೆದಾಯನ ಮಗಳೂ ಆದ ಜೆಬೂದಾ ಎಂಬಾಕೆ ಅವನ ತಾಯಿ.</verse>
				<verse number="37">ಅವನು ತನ್ನ ಪೂರ್ವಜರಂತೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು. ಅವನ ಕಾಲದಲ್ಲಿ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ಬಂದನು.</verse>
			</chapter>
			<chapter number="24">
				<verse number="1">ಯೆಹೋಯಾಕೀಮನು ಅವನಿಗೆ ಅಧೀನನಾಗಿ ಮೂರು ವರ್ಷಗಳಾದ ನಂತರ ಅವನಿಗೆ ವಿರುದ್ಧ ದಂಗೆಯೆದ್ದನು.</verse>
				<verse number="2">ಸರ್ವೇಶ್ವರ, ತನ್ನ ದಾಸರಾದ ಪ್ರವಾದಿಗಳ ಮುಖಾಂತರ ಮುಂತಿಳಿಸಿದ ಪ್ರಕಾರ ಜುದೇಯ ರಾಜ್ಯವನ್ನು ಹಾಳುಮಾಡುವುದಕ್ಕಾಗಿ ಬಾಬಿಲೋನಿಯ, ಸಿರಿಯ, ಮೋಬಾವ, ಅಮ್ಮೋನ್ ದೇಶೀಯರಾದ ಸುಲಿಗೆಗಾರರನ್ನು ಕಳುಹಿಸಿದರು.</verse>
				<verse number="3">ನಿರಪರಾಧಿಗಳ ಹತ್ಯೆಯಿಂದ ಜೆರುಸಲೇಮನ್ನು ರಕ್ತಮಯವಾಗಿಸಿದ್ದ ಮನಸ್ಸೆಯ ದುಷ್ಕೃತ್ಯಗಳನ್ನು ಸರ್ವೇಶ್ವರ ಕ್ಷಮಿಸದೆ ಹೋದರು;</verse>
				<verse number="4">ಅವುಗಳಿಗಾಗಿ ಯೆಹೂದ್ಯರನ್ನು ತನ್ನ ಸನ್ನಿಧಿಯಿಂದ ತೆಗೆದುಹಾಕಬೇಕೆಂದಿದ್ದುದರಿಂದ ಸರ್ವೇಶ್ವರನ ಅಪ್ಪಣೆಯ ಪ್ರಕಾರ ಈ ಶಿಕ್ಷೆ ಅವರಿಗೆ ವಿಧಿಸಲಾಯಿತು.</verse>
				<verse number="5">ಯೆಹೋಯಾಕೀಮನ ಉಳಿದ ಚರಿತ್ರೆ ಹಾಗು ಕಾರ್ಯಕಲಾಪಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿವೆ.</verse>
				<verse number="6">ಅವನು ಮೃತನಾಗಿ ಪಿತೃಗಳ ಬಳಿ ಸೇರಿದನು. ಅವನ ಸ್ಥಾನದಲ್ಲಿ ಅವನ ಮಗ ಯೆಹೋಯಾಖೀನನು ಅರಸನಾದನು.</verse>
				<verse number="7">ಬಾಬಿಲೋನಿನ ಅರಸನು ಈಜಿಪ್ಟಿನ ಪ್ರವಾಹಕ್ಕೂ ಯೂಫ್ರಟಿಸ್ ನದಿಗೂ ಮಧ್ಯದಲ್ಲಿದ್ದ ಈಜಿಪ್ಟ್ ರಾಜನ ಎಲ್ಲಾ ದೇಶವನ್ನು ಸ್ವಾಧೀನ ಮಾಡಿಕೊಂಡನು. ಅಂದಿನಿಂದ ಈಜಿಪ್ಟಿನ ಅರಸನು ತನ್ನ ದೇಶದಿಂದ ಈಚೆಗೆ ಬರಲೇ ಇಲ್ಲ.</verse>
				<verse number="8">ಯೆಹೋಯಾಖೀನನು ಅರಸನಾದಾಗ ಹದಿನೆಂಟು ವರ್ಷದವನಾಗಿದ್ದು ಜೆರುಸಲೇಮಿನಲ್ಲಿ ಮೂರು ತಿಂಗಳು ಆಳಿದನು. ಜೆರುಸಲೇಮಿನ ಎಲ್ನಾತಾನನ ಮಗಳಾದ ನೆಹುಷ್ಟಾ ಎಂಬಾಕೆ ಇವನ ತಾಯಿ.</verse>
				<verse number="9">ಇವನು ತನ್ನ ತಂದೆಯಂತೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿದ್ದನು.</verse>
				<verse number="10">ಅವನ ಕಾಲದಲ್ಲಿ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಸೈನ್ಯದವರು ಜೆರುಸಲೇಮಿಗೆ ದಂಡೆತ್ತಿ ಬಂದು ಅದಕ್ಕೆ ಮುತ್ತಿಗೆ ಹಾಕಿದರು.</verse>
				<verse number="11">ಅಷ್ಟರಲ್ಲಿ ನೆಬೂಕದ್ನೆಚ್ಚರನೂ ಬಂದನು.</verse>
				<verse number="12">ಆಗ ಜುದೇಯದ ಅರಸ ಯೆಹೋಯಾಖೀನನು, ತನ್ನ ತಾಯಿ, ಪರಿವಾರದವರು, ಸೇನಾಪತಿಗಳು, ಕಂಚುಕಿಗಳು ಇವರೊಡನೆ ಅವನ ಬಳಿಗೆ ಹೋದನು. ಅವನು ಇವನನ್ನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಸೆರೆಹಿಡಿದನು.</verse>
				<verse number="13">ಇದಲ್ಲದೆ, ಸರ್ವೇಶ್ವರ ಮುಂತಿಳಿಸಿದ ಪ್ರಕಾರ, ಅವನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ದ್ರವ್ಯವನ್ನೆಲ್ಲಾ ದೋಚಿಕೊಂಡು ಹೋದನು. ಇಸ್ರಯೇಲರ ಅರಸನಾದ ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಆಭರಣಗಳನ್ನು ಮುರಿದುಬಿಟ್ಟನು.</verse>
				<verse number="14">ಜೆರುಸಲೇಮಿನಲ್ಲಿದ್ದ ಎಲ್ಲಾ ಪದಾಧಿಕಾರಿಗಳನ್ನೂ ಯೋಧರನ್ನೂ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಒಟ್ಟಾರೆ ಹತ್ತು ಸಾವಿರ ಜನರನ್ನು ಸೆರೆಗೊಯ್ದನು. ನಾಡಿನ ಜನರಲ್ಲಿ ಕೇವಲ ಬಡವರನ್ನು ಹೊರತಾಗಿ ಬೇರೆ ಯಾರನ್ನೂ ಬಿಡಲಿಲ್ಲ.</verse>
				<verse number="15">ಅವನು ಯೆಹೋಯಾಖೀನನ್ನೂ ಅವನ ತಾಯಿ, ಹೆಂಡತಿಯರು, ಕಂಚುಕಿಗಳನ್ನೂ ನಾಡಿನ ಪ್ರಧಾನ ಪುರುಷರು ಇವರನ್ನೂ,</verse>
				<verse number="16">ಏಳು ಸಾವಿರ ಮಂದಿ ಯೋಧರನ್ನೂ ಸಾವಿರ ಮಂದಿ ಕಮ್ಮಾರರು ಮೊದಲಾದ ಕೈಗಾರಿಕೆಯವರನ್ನೂ ಜೆರುಸಲೇಮಿನಿಂದ ಬಾಬಿಲೋನಿಗೆ ಒಯ್ದನು. ಅವರೆಲ್ಲರು ಪುಷ್ಟರೂ ರಣವೀರರೂ ಆಗಿದ್ದರು.</verse>
				<verse number="17">ಬಾಬಿಲೋನಿನ ಅರಸನು ಯೆಹೋಯಾಖೀನನಿಗೆ ಬದಲಾಗಿ ಅವನ ಚಿಕ್ಕಪ್ಪನಾದ ಮತ್ತನ್ಯ ಎಂಬುವನನ್ನು ಅರಸನನ್ನಾಗಿ ನೇಮಿಸಿ ಅವನಿಗೆ ‘ಚಿದ್ಕೀಯ’ ಎಂಬ ಹೆಸರಿಟ್ಟನು.</verse>
				<verse number="18">ಚಿದ್ಕೀಯನು ಇಪ್ಪತ್ತೊಂದು ವರ್ಷ ತುಂಬಿದ ಮೇಲೆ ಅರಸನಾಗಿ ಜೆರುಸಲೇಮನ್ನು ಹನ್ನೊಂದು ವರ್ಷ ಆಳಿದನು. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆ.</verse>
				<verse number="19">ಚಿದ್ಕೀಯನು ಯೆಹೋಯಾಕೀಮನಂತೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾಗಿ ಇದ್ದನು.</verse>
				<verse number="20">ಸರ್ವೇಶ್ವರಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು.</verse>
			</chapter>
			<chapter number="25">
				<verse number="1">ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ದಂಗೆ ಎದ್ದನು. ಇವನು‍ ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಸರ್ವಸೈನ್ಯ ಸಮೇತ ಜೆರುಸಲೇಮಿಗೆ ಬಂದನು. ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಎಬ್ಬಿಸಿದನು.</verse>
				<verse number="2">ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದಲ್ಲಿ ಅದಕ್ಕೆ ಮುತ್ತಿಗೆ ಹಾಕಿದನು.</verse>
				<verse number="3">ಘೋರಕ್ಷಾಮದ ಕಾರಣ ನಗರದವರಿಗೆ ಆಹಾರ ಸಿಕ್ಕದೆ ಹೋಯಿತು. ನಗರಕ್ಕೆ ಮುತ್ತಿಗೆಹಾಕಿದ್ದ ಬಾಬಿಲೋನಿಯರು ಹನ್ನೊಂದನೆಯ ತಿಂಗಳಿನ ಒಂಬತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದರು.</verse>
				<verse number="4">ಒಳಗಿದ್ದ ಅರಸನೂ ಅವನ ಎಲ್ಲ ಸೈನಿಕರೂ ಅದೇ ರಾತ್ರಿ, ಅರಸನ ತೋಟದ ಬಳಿಯಿದ್ದ ಬಾಗಿಲಿನ ಮೂಲಕ, ನಗರದಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯೆಯಿತ್ತು. ಅರಸನು ಅರಾಬಾ ಎಂಬ ಕಣಿವೆ ಪ್ರದೇಶದ ಮಾರ್ಗವಾಗಿ ಓಡಿಹೋದನು.</verse>
				<verse number="5">ಬಾಬಿಲೋನಿಯದ ಸೈನಿಕರು ಅವನನ್ನು ಹಿಂದಟ್ಟಿ ಜೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಸೈನಿಕರೆಲ್ಲರು ಅವನನ್ನು ಬಿಟ್ಟು ಚದರಿಹೋಗಿದ್ದರು.</verse>
				<verse number="6">ಅನಂತರ ಬಾಬಿಲೋನಿಯರು ಅವನನ್ನು ರಿಬ್ಲದಲ್ಲಿದ್ದ ತಮ್ಮ ಅರಸನ ಬಳಿಗೆ ಎಳೆದು ತಂದು ಅವನಿಗೆ ಶಿಕ್ಷೆಯನ್ನು ವಿಧಿಸಿದರು.</verse>
				<verse number="7">ಇವನ ಇಬ್ಬರು ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿ, ಅವನಿಗೆ ಬೇಡಿಹಾಕಿ ಎರಡು ಕಣ್ಣುಗಳನ್ನೂ ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.</verse>
				<verse number="8">ಐದನೆಯ ತಿಂಗಳಿನ ಏಳನೆಯ ದಿನ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ, ಬಾಬಿಲೋನಿನ ಅರಸನ ಸೇವಕನೂ ರಕ್ಷಾದಳದ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬವನು ಜೆರುಸಲೇಮಿಗೆ ಬಂದನು.</verse>
				<verse number="9">ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.</verse>
				<verse number="10">ಅವನ ಜೊತೆಯಲ್ಲಿ ಬಂದಿದ್ದ ಬಾಬಿಲೋನಿಯದ ಸೈನ್ಯದವರು ಜೆರುಸಲೇಮಿನ ಸುತ್ತುಗೋಡೆಗಳನ್ನೆಲ್ಲ ಕೆಡವಿದರು.</verse>
				<verse number="11">ರಕ್ಷಾದಳದ ಅಧಿಪತಿಯಾದ ನೆಬೂಜರದಾನನು ನಗರದಲ್ಲಿ ಉಳಿದವರನ್ನು, ಮೊದಲೇ ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನು ಹಾಗು ಬೇರೆ ಜನರೆಲ್ಲರನ್ನು ಸೆರೆಗೆ ಒಯ್ದನು.</verse>
				<verse number="12">ಹೊಲಗಳನ್ನು ಮತ್ತು ದ್ರಾಕ್ಷೀತೋಟಗಳನ್ನು ಮಾಡುವುದಕ್ಕಾಗಿ ನಾಡಿನ ಜನರಲ್ಲಿ ಕೇವಲ ದರಿದ್ರರನ್ನು ಮಾತ್ರ ಬಿಟ್ಟುಹೋದನು.</verse>
				<verse number="13">ಬಾಬಿಲೋನಿಯದವರು ಸರ್ವೇಶ್ವರನ ಆಲಯದಲ್ಲಿದ್ದ ಕಂಚಿನ ಕಂಬಗಳನ್ನೂ ಚಕ್ರದ ಬಂಡಿಗಳನ್ನೂ, ಕಡಲಿನ ಆಕಾರದ ಕಂಚಿನ ಪಾತ್ರೆಯನ್ನೂ ಒಡೆದು ಅವುಗಳ ಕಂಚನ್ನೆಲ್ಲ ಕೊಂಡೊಯ್ದರು.</verse>
				<verse number="14">ಅದು ಮಾತ್ರವಲ್ಲ, ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಸಾಂಬ್ರಾಣಿಕಳಸ ಮುಂತಾದ ಕಂಚಿನ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.</verse>
				<verse number="15">ರಕ್ಷಾದಳದ ನಾಯಕನು ಬೆಳ್ಳಿ ಬಂಗಾರದ ಅಗ್ಗಿಷ್ಟಿಕೆ, ಬಟ್ಟಲು, ಮೊದಲಾದುವುಗಳನ್ನು ದೋಚಿಕೊಂಡನು.</verse>
				<verse number="16">ಸೊಲೊಮೋನನು ಸರ್ವೇಶ್ವರನ ಆಲಯಕ್ಕಾಗಿ ಮಾಡಿಸಿದ್ದ ಎರಡು ಕಂಬಗಳು, ಕಡಲಿನ ಆಕಾರದ ಪಾತ್ರೆ, ಚಕ್ರದ ಬಂಡಿಗಳು ಇವುಗಳನ್ನು ಮಾಡುವುದಕ್ಕೆ ಎಷ್ಟೋ ಕಂಚು ಹಿಡಿದಿತ್ತು.</verse>
				<verse number="17">ಪ್ರತಿಯೊಂದು ಕಂಬ ಹದಿನೆಂಟು ಮೊಳ ಎತ್ತರವಿತ್ತು. ಪ್ರತಿಯೊಂದರ ಮೇಲೆ ಮೂರು ಮೊಳ ಎತ್ತರವಾದ ಒಂದು ಕಂಚಿನ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ಕಂಚಿನ ಜಾಲರಿ ಹಾಗು ದಾಳಿಂಬೆ ಹಣ್ಣುಗಳು ಇದ್ದವು.</verse>
				<verse number="18">ರಕ್ಷಾದಳದ ನಾಯಕ ನೆಬೂಜರದಾನನು ಹಿಡಿದುಕೊಂಡು ಹೋದ ಜನರಲ್ಲಿ ಪ್ರಧಾನ ಯಾಜಕ ಸೆರಾಯನು, ಮುಖ್ಯ ಯಾಜಕ ಚೆಫನ್ಯನು, ಮೂರು ಮಂದಿ ದ್ವಾರಪಾಲಕರು ಸೇರಿದ್ದರು.</verse>
				<verse number="19">ಸೈನ್ಯ ಸಂಬಂಧವಾದ ಎಲ್ಲ ವ್ಯವಸ್ಥೆಯನ್ನು, ನಗರದಲ್ಲಿ ಉಳಿದಿದ್ದ ಹಾಗು ಅರಸನಿಗೆ ಆಪ್ತರಾಗಿದ್ದ ಐದು ಮಂದಿ ಮಂತ್ರಿಗಳನ್ನು, ಯುದ್ಧಕ್ಕೆ ಹೋಗತಕ್ಕವರನ್ನು ಪಟ್ಟಿಮಾಡುವ ಸೇನಾಪತಿಯ ಲೇಖಕನನ್ನು ಹಾಗು ನಗರದಲ್ಲಿದ್ದ ಅರವತ್ತು ಮಂದಿ ರೈತರನ್ನು ಹಿಡಿದುಕೊಂಡು ಹೋದನು.</verse>
				<verse number="20">ನೆಬೂಜರದಾನನು ಇವರನ್ನೆಲ್ಲ ತೆಗೆದುಕೊಂಡು ಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು.</verse>
				<verse number="21">ಅವನು ಅವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ನಾಡನ್ನೇ ಬಿಟ್ಟು ಹೋಗಬೇಕಾಯಿತು.</verse>
				<verse number="22">ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ತಾನು ಜುದೇಯ ದೇಶದಲ್ಲಿ ಉಳಿಸಿದ ಜನರ ಮೇಲೆ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯ ಎಂಬವನನ್ನು ರಾಜ್ಯಪಾಲನನ್ನಾಗಿ ನೇಮಿಸಿದನು.</verse>
				<verse number="23">ಅಳಿದು ಉಳಿದಿದ್ದ ಯೆಹೂದ ಸೇನಾಪತಿಗಳು, ಗೆದಲ್ಯನು ಬಾಬಿಲೋನಿನ ಅರಸನಿಂದ ರಾಜ್ಯಪಾಲನಾಗಿ ನೇಮಕವಾಗಿದ್ದಾನೆಂಬ ಸಮಾಚಾರವನ್ನು ಕೇಳಿ, ತಮ್ಮ ಜನರೊಡನೆ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಬಂದರು. ಅವರ ಹೆಸರುಗಳು ಇವು: ನೆತನ್ಯನ ಮಗ ಇಷ್ಮಾಯೇಲನು, ಕಾರೇಹನ ಮಗ ಯೋಹಾನಾನ್, ನೆಟೋಫದವನೂ ತನ್ಹುಮೆತನ ಮಗನೂ ಆದ ಸೆರಾಯನು, ಮಾಕಾ ಊರಿನವನಾದ ಯಾಜನ್ಯನು.</verse>
				<verse number="24">ಗೆದಲ್ಯನು ಇವರಿಗೂ ಇವರ ಜನರಿಗೂ, “ಬಾಬಿಲೋನಿಯಾದ ಸೈನ್ಯದವರಿಗೆ ಹೆದರಬೇಡಿ; ಬಾಬಿಲೋನಿನ ಅರಸನಿಗೆ ಅಧೀನರಾಗಿದ್ದು ಇಲ್ಲಿಯೇ ವಾಸಿಸಿರಿ; ಆಗ ನಿಮಗೆ ಶುಭವಾಗುವುದು,” ಎಂದು ಆಣೆಯಿಟ್ಟು ಹೇಳಿದನು.</verse>
				<verse number="25">ಆದರೆ ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇಲನು ಹತ್ತುಮಂದಿ ಆಳುಗಳೊಡನೆ ಬಂದು ಗೆದಲ್ಯನನ್ನು, ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನು ಹಾಗು ಬಾಬಿಲೋನಿಯಾದವರನ್ನು ಸಂಹರಿಸಿದನು.</verse>
				<verse number="26">ಆಗ ಚಿಕ್ಕವರು, ದೊಡ್ಡವರು, ಸೇನಾಪತಿಗಳು, ಎಲ್ಲರು ಬಾಬಿಲೋನಿಯಾದವರಿಗೆ ಹೆದರಿ ಈಜಿಪ್ಟಿಗೆ ಓಡಿಹೋದರು.</verse>
				<verse number="27">ಎವೀಲ್ಮೆರೋದಕನು ತಾನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ ಅಂದರೆ, ಜುದೇಯದ ಅರಸ ಯೆಹೋಯಾಖೀನನು ಸೆರೆಗೆ ಸಿಕ್ಕಿದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೇಳನೆಯ ದಿನದಲ್ಲಿ, ಯೆಹೋಯಾಖೀನನನ್ನು ಸೆರೆಯಿಂದ ಬಿಡಿಸಿ ಉದ್ಧಾರ ಮಾಡಿದನು.</verse>
				<verse number="28">ಅದು ಮಾತ್ರವಲ್ಲ, ಅವನೊಡನೆ ಪ್ರೀತಿಯಿಂದ ಮಾತಾಡಿ, ತನ್ನ ಸಂಗಡ ಬಾಬಿಲೋನಿನಲ್ಲಿದ್ದ ಎಲ್ಲ ಅರಸುಗಳಲ್ಲಿ ಅವನಿಗೇ ಉನ್ನತ ಸ್ಥಾನವನ್ನು ಕೊಟ್ಟನು.</verse>
				<verse number="29">ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದ ಇರುವವರೆಗೂ, ಅರಸನ ಪಂಕ್ತಿಯಲ್ಲೇ ಊಟಮಾಡುತ್ತಿದ್ದನು.</verse>
				<verse number="30">ಅವನ ಜೀವಿತಕಾಲವೆಲ್ಲ, ಅವನಿಗೆ ಬೇಕಾಗಿ ಇದ್ದ ಎಲ್ಲ ಪದಾರ್ಥಗಳು ಅರಸನಿಂದಲೇ ಪ್ರತಿನಿತ್ಯವೂ ದೊರಕುತ್ತಿದ್ದವು.</verse>
			</chapter>
		</book>
		<book number="13">
			<chapter number="1">
				<verse number="1">ಆದಾಮನ ಮಗ ಶೇತ್, ಶೇತನ ಮಗ ಎನೋಷ್, ಎನೋಷನ ಮಗ ಕೇನಾನ್,</verse>
				<verse number="2">ಕೇನಾನನ ಮಗ ಮಹಲಲೀಲ್, ಮಹಲಲೀಲನ ಮಗ ಯೆರೆದ್,</verse>
				<verse number="3">ಯೆರೆದನ ಮಗ ಹನೋಕ್, ಹನೋಕನ ಮಗ ಮೆತೂಷೆಲಹ, ಮೆತೂಷೆಲಹನ ಮಗ ಲೆಮೆಕ್,</verse>
				<verse number="4">ಲೆಮೆಕನ ಮಗ ನೋಹ, ನೋಹನಿಗೆ ಶೇಮ್, ಹಾಮ್, ಯೆಫೆತ್ ಎಂಬ ಮೂರು ಜನ ಮಕ್ಕಳು ಇದ್ದರು.</verse>
				<verse number="5">ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್ ಎಂಬವರು ಯೆಫೆತನ ಮಕ್ಕಳು. ಇವರ ಹೆಸರುಗಳಿರುವ ಜನಾಂಗಗಳಿಗೆ ಇವರೇ ಮೂಲಪುರುಷರು.</verse>
				<verse number="6">ಅಷ್ಕೆನೆಜ್, ರೀಫತ್, ತೋಗರ್ಮ - ಇವರು ಗೋಮೆರನ ಮಕ್ಕಳು.</verse>
				<verse number="7">ಎಲೀಷ, ಸ್ಪೇನ್, ಸೈಪ್ರಸ್, ದೋದಾನೀಮ್ ಎಂಬ ಸ್ಥಳಗಳವರು ಯಾವಾನನ ಮಕ್ಕಳು.</verse>
				<verse number="8">ಕೂಷ್, ಈಜಿಪ್ಟ್ (ಮಿಚ್ರಯಿಮ್), ಲಿಬ್ಯ (ಪೂಟ್), ಕಾನಾನ್‍ಗಳಲ್ಲಿರುವವರು ಹಾಮನ ವಂಶಜರು. ಇವೇ ಈ ಜನಾಂಗಗಳ ಮೂಲಪಿತೃಗಳ ಹೆಸರುಗಳು.</verse>
				<verse number="9">ಸೆಬ, ಹವೀಲ, ಸಬ್ತ, ರಮ್ಮಸಬ್ತೆಕಾಗಳ ಜನರು ಕೂಷನ ಸಂತತಿಯವರು. ಶೆಬ ಮತ್ತು ದೆದಾನಿನವರು ರಮ್ಮ ಸಂತಾನದವರು. (</verse>
				<verse number="10">ಕೂಷನ ಮಗ ನಿಮ್ರೋದ; ಇವನು ಪರಾಕ್ರಮದಿಂದ ಮೊದಲನೆಯ ಭೂರಾಜನಾದನು.)</verse>
				<verse number="11">ಈಜಿಪ್ಟಿನ ಜನಾಂಗದಿಂದ ಲೂದ್ಯರೂ, ಅನಾಮ್ಯರೂ ಲೆಹಾಬ್ಯರೂ ನಫ್ತುಹ್ಯರೂ</verse>
				<verse number="12">ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಜನಿಸಿದರು. (ಫಿಲಿಷ್ಟಿಯರು ಕಸ್ಲುಹ್ಯರಿಂದ ಬಂದವರು.)</verse>
				<verse number="13">ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಹೇತ್ ಎರಡನೆಯವನು. ಈ ಹೆಸರಿನ ಜನಾಂಗದವರಿಗೆ ಇವರೇ ಮೂಲಪುರುಷರು.</verse>
				<verse number="14">ಯೆಬೂಸಿಯ, ಅಮೋರಿಯ, ಗಿರ್ಗಾಷಿಯ,</verse>
				<verse number="15">ಹಿವ್ವಿಯ, ಅರ್ಕಿಯ, ಸೀನಿಯ,</verse>
				<verse number="16">ಅರ್ವಾದಿಯ, ಚೆಮಾರಿಯ ಮತ್ತು ಹಮಾತಿನ ಜನರ ಮೂಲಪಿತೃ ಕಾನಾನನು.</verse>
				<verse number="17">ಶೇಮನ ಮಕ್ಕಳು - ಏಲಾಮ್, ಅಶ್ಶೂರ್, ಅರ್ಪಕ್ಷದ್, ಲೂದ್, ಅರಾಮ್, ಊಚ್, ಹೂಲ್, ಗೆತೆರ್, ಮೆಷೆಕ್ ಎಂಬವರು. ಈ ಹೆಸರಿನ ಜನಾಂಗಗಳಿಗೆ ಇವರೇ ಮೂಲಪುರುಷರು.</verse>
				<verse number="18">ಅರ್ಪಕ್ಷದ್, ಶೆಲಹನ ತಂದೆ, ಶೆಲಹ, ಏಬೆರನ ತಂದೆ.</verse>
				<verse number="19">ಏಬೆರನಿಗೆ ಇಬ್ಬರು ಮಕ್ಕಳು - ಪೆಲೆಗ್ ಎಂಬವನು ಒಬ್ಬ. ಅವನ ಕಾಲದಲ್ಲಿ ಲೋಕದಲ್ಲಿಯ ಜನರು ವಿಭಾಗವಾದದ್ದರಿಂದ ಈ ಹೆಸರು ಅವನಿಗೆ ಬಂದಿತು. ಯೊಕ್ತಾನ ಎಂಬವನು ಇನ್ನೊಬ್ಬ.</verse>
				<verse number="20">ಅಲ್ಮೋದಾದ್, ಶೆಲೆಫ್, ಹಚರ್ಮಾವೆತ್, ಯೆರಹ,</verse>
				<verse number="21">ಹದೋರಾಮ್, ಊಜಾಲ್, ದಿಕ್ಲ,</verse>
				<verse number="22">ಏಬಾಲ್, ಅಬೀಮಾಯೇಲ್, ಶೆಬಾ,</verse>
				<verse number="23">ಓಫೀರ್, ಹವೀಲಾ, ಯೋಬಾಬ್ ಎಂಬ ಸ್ಥಳಗಳವರು ಯೊಕ್ತಾನನ ಸಂತಾನದವರು.</verse>
				<verse number="24">ಶೇಮನಿಂದ ಅಬ್ರಾಮನವರೆಗಿನ ಸಂತತಿಯವರು ಇವರು: ಅರ್ಪಕ್ಷದ್, ಶೆಲಹ,</verse>
				<verse number="25">ಏಬೆರ್, ಪೆಲೆಗ್, ರೆಯೂ,</verse>
				<verse number="26">ಸೆರೂಗ್, ನಾಹೋರ್, ತೆರಹ;</verse>
				<verse number="27">ಅಬ್ರಾಮ್ (ಇವನು ಅಬ್ರಹಾಮ ಎಂದೂ ಹೆಸರು ಹೊಂದಿದವನು).</verse>
				<verse number="28">ಅಬ್ರಹಾಮನಿಗೆ ಇಬ್ಬರು ಮಕ್ಕಳು - ಇಸಾಕ್ ಮತ್ತು ಇಷ್ಮಾಯೇಲ್.</verse>
				<verse number="29">ಇಷ್ಮಾಯೇಲನ ಮಕ್ಕಳು ಹನ್ನೆರಡು ಗೋತ್ರಗಳ ಮುಖ್ಯಸ್ಥರಾದರು. ಅವರು - ನೆಬಾಯೋತ್, (ಇಷ್ಮಾಯೇಲನ ಹಿರೀಮಗನಿಂದ ಈ ಹೆಸರಿನ ಉತ್ಪತ್ತಿ), ಕೇದಾರ್, ಅದ್ಬೆಯೇಲ್, ಮಿಬ್ಸಾಮ್,</verse>
				<verse number="30">ಮಿಷ್ಮಾ, ದೂಮಾ, ಮಸ್ಸ, ಹದದ್, ತೇಮ,</verse>
				<verse number="31">ಯೆಟೂರ್, ನಾಫೀಷ್, ಕೇದೆಮ ಎಂಬವರು.</verse>
				<verse number="32">ಅಬ್ರಹಾಮನಿಗೆ ಕೆಟೂರಳೆಂಬ ಉಪಪತ್ನಿ ಇದ್ದಳು. ಇವಳಿಂದ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಎಂಬ ಆರು ಜನ ಮಕ್ಕಳು ಜನಿಸಿದರು. ಯೊಕ್ಷಾನ್‍ನಿಗೆ ಶೆಬಾ ಮತ್ತು ದೆದಾನ್ ಎಂಬಿಬ್ಬರು ಮಕ್ಕಳು ಹುಟ್ಟಿದರು.</verse>
				<verse number="33">ಮಿದ್ಯಾನ್ ಗೆ ಏಫಾ, ಏಫೆರ್, ಹನೋಕ್, ಅಬೀದ, ಎಲ್ದಾಯ ಎಂಬ ಐದು ಜನ ಮಕ್ಕಳು ಹುಟ್ಟಿದರು.</verse>
				<verse number="34">ಅಬ್ರಹಾಮನ ಮಗ ಇಸಾಕನಿಗೆ ಇಬ್ಬರು ಮಕ್ಕಳು - ಏಸಾವ ಮತ್ತು ಯಕೋಬ.</verse>
				<verse number="35">ಏಸಾವನ ಮಕ್ಕಳು - ಎಲೀಫಜ್, ರೆಯೂವೇಲ್, ಯೆಯೂಷ್, ಯಳಾಮ್, ಹಾಗೂ ಕೋರಹ ಎಂಬವರು.</verse>
				<verse number="36">ಎಲೀಫಜ್ ನ ಮಕ್ಕಳು ತೇಮಾನ್, ಓಮಾರ್, ಜೆಫೀ, ಗತಾಮ್, ಕೆನಜ್ ಹಾಗೂ ತಿಮ್ನ ಎಂಬುವಳಿಂದ ಜನಿಸಿದ ಅಮಾಲೇಕ್ ಎಂಬವರು.</verse>
				<verse number="37">ರೆಯೂವೇಲನ ಮಕ್ಕಳು - ನಹತ್, ಜೆರಹ, ಶಮ್ಮ ಮತ್ತು ಮಿಜ್ಜ ಎಂಬವರು.</verse>
				<verse number="38">ಈ ಕೆಳಗೆ ನಮೂದಿಸಿದ ಎದೋಮಿನ ಮೂಲನಿವಾಸಿಗಳು ಸೇಯೀರನಿಂದ ಹುಟ್ಟಿದವರು: ಲೋಟಾನ್, ಶೋಬಾಲ್, ಚಿಬ್ಬೋನ್, ಅನಾಹ, ದೀಶೋನ್, ಏಚೆರ್, ದೀಶಾನ್.</verse>
				<verse number="39">ಹೋರೀ ಮತ್ತು ಹೋಮಾಮ್ ಕುಲಗಳ ಮೂಲಪುರುಷ ಲೋಟಾನ್. ಲೋಟಾನನಿಗೆ ತಿಮ್ನ ಎಂಬ ಒಬ್ಬ ತಂಗಿಯಿದ್ದಳು.</verse>
				<verse number="40">ಶೋಬಾಲ್ - ಇವನು ಅಲ್ಯಾನ್, ಮಾನಹತ್, ಏಬಾಲ್, ಶೆಫೀ, ಓನಾಮ್ ಎಂಬವರ ಕುಲಗಳ ಪೂರ್ವಜ.</verse>
				<verse number="41">ಅನಾಹನು ದೀಶೋನನ ತಂದೆ. ದೀಶೋನನು ಹಮ್ರಾನ್, ಎಷ್ಬಾನ್, ಇತ್ರಾನ್, ಕೆರಾನ್ ಗೋತ್ರಗಳ ಪೂರ್ವಜ.</verse>
				<verse number="42">ಏಚೆರ್: ಇವನು ಬಿಲ್ಹಾನ್, ಜಾವಾನ್, ಯಾಕಾನ್ ಎಂಬ ಕುಲಗಳ ಮೂಲಪುರುಷ. ದೀಶಾನನು, ಉಚ್ ಹಾಗೂ ಅರಾನ್ ಕುಲಗಳ ಪೂರ್ವಜ.</verse>
				<verse number="43">ಇಸ್ರಯೇಲರಲ್ಲಿ ಅರಸರೇ ಇರಲಿಲ್ಲದ ಕಾಲದಲ್ಲಿ ಎದೋಮ್ ದೇಶವನ್ನು ಆಳಿದ ಅರಸರು. ಬೆಯೋರನ ಮಗ ಬೆಳನು; ದಿನ್ಹಾಬಾ ಇವನ ರಾಜಧಾನಿ.</verse>
				<verse number="44">ಬೆಳನು ಮರಣಹೊಂದಿದ ತರುವಾಯ ಬೊಚ್ರದ ಜೆರಹನ ಮಗ ಯೋಬಾಬ ಅವನ ಉತ್ತರಾಧಿಕಾರಿಯಾದನು.</verse>
				<verse number="45">ಯೋಬಾಬ ಮೃತನಾದ ಮೇಲೆ ತೇಮಾನೀಯರ ನಾಡಿನ ಹುಷಾಮ ಅರಸನಾದ.</verse>
				<verse number="46">ಹುಷಾಮ ಮೃತನಾದ ಮೇಲೆ ಅವೀತದ ಬೆದದನ ಮಗ ಹದದ ಅರಸನಾದ. ಇವನು ಮೋವಾಬ್ ದೇಶದಲ್ಲಿ ನಡೆದ ಯುದ್ಧದಲ್ಲಿ ಮಿದ್ಯಾನರನ್ನು ಸೋಲಿಸಿದ; ಅವನ ರಾಜಧಾನಿಯ ಹೆಸರು ಅವೀತ್.</verse>
				<verse number="47">ಹದದ ಮೃತನಾದ ಮೇಲೆ ಮಸ್ರೇಕದ ಸಮ್ಲಾಹ ಅರಸನಾದ.</verse>
				<verse number="48">ಸಮ್ಲಾಹ ಮೃತನಾದ ಮೇಲೆ ಯುಪ್ರಟಿಸ್ ನದೀತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಅರಸನಾದ.</verse>
				<verse number="49">ಸೌಲನು ಮೃತನಾದ ಮೇಲೆ ಅಕ್ಬೋರನ ಮಗ ಬಾಳ್ಹಾನಾನ ಅರಸನಾದ.</verse>
				<verse number="50">ಬಾಳ್ಹಾನಾನ್ ಮೃತನಾದ ಮೇಲೆ ಪಾಗೀಯ ಹದದನು ಅರಸನಾದ. ಇವನ ಹೆಂಡತಿ ಮೆಹೇಟಬೇಲ್; ಈಕೆ ಮಟ್ರೇದಳ ಮಗಳು, ಮೇಜಾಹಾಬನ ಮೊಮ್ಮಗಳು.</verse>
				<verse number="51">ಹದದನು ಮೃತನಾದ ತರುವಾಯ ಆಳಿದ ಎದೋಮ್ಯರು: ತಿಮ್ನ, ಅಲ್ಯ, ಯೆತೇತ್, ಒಹೋಲಿಬಾಮ, ಏಲ, ಪೀನೋನ್, ಕೆನಜ್, ತೇಮಾನ್, ಮಿಬ್ಚಾರ್, ಮಗ್ದೀಯೇಲ್ ಮತ್ತು ಗೀರಾಮ್ ಎಂಬ ಕುಲನಾಯಕರು.</verse>
			</chapter>
			<chapter number="2">
				<verse number="1">ಯಕೋಬನ ಹನ್ನೆರಡು ಜನ ಮಕ್ಕಳು ಇವರು: ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬೂಲೂನ್,</verse>
				<verse number="2">ದಾನ್, ಜೋಸೆಫ್, ಬಿನ್ಯಾಮೀನ್, ನಫ್ತಾಲಿ, ಗಾದ್ ಮತ್ತು ಆಶೇರ್.</verse>
				<verse number="3">ಯೆಹೂದನ ಹೆಂಡತಿ ಶೂನನ ಮಗಳಾದ ಕಾನಾನಳು. ಅವಳಿಂದ ಏರ್, ಓನಾನ್, ಶೇಲಹ ಎಂಬ ಮೂರು ಮಕ್ಕಳು ಜನಿಸಿದರು. ಅವನ ಹಿರಿಯ ಮಗ ಏರನು ಬಹಳ ದುಷ್ಟ. ಆದುದರಿಂದ ಸರ್ವೇಶ್ವರ ಅವನನ್ನು ಕೊಂದುಹಾಕಿದರು.</verse>
				<verse number="4">ಯೆಹೂದನಿಗೆ ಅವನ ಸೊಸೆ ತಾಮಾರಳಿಂದ ಪೆರೆಜ್ ಹಾಗೂ ಜೆರಹ ಎಂಬ ಮಕ್ಕಳು ಜನಿಸಿದರು. ಯೆಹೂದನ ಮಕ್ಕಳು ಒಟ್ಟು ಐದು ಮಂದಿ.</verse>
				<verse number="5">ಪೆರೆಚನಿಗೆ ಹೆಚ್ರೋನ್, ಹಾಮುಲ್ ಎಂಬಿಬ್ಬರು ಮಕ್ಕಳು.</verse>
				<verse number="6">ಅವನ ಸಹೋದರ ಜೆರಹನಿಗೆ ಐದು ಜನ ಮಕ್ಕಳು: ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್, ಮತ್ತು ದಾರ.</verse>
				<verse number="7">ಜೆರಹನ ಸಂತತಿಯಲ್ಲಿ ಕರ್ಮಿಯ ಮಗ ಆಕಾರನು ಸರ್ವೇಶ್ವರನಿಗೆ ಮೀಸಲಾಗಿಟ್ಟಿದ್ದ ವಸ್ತುಗಳನ್ನು ಕದ್ದುಕೊಂಡದ್ದರಿಂದ ಇಸ್ರಯೇಲರಿಗೆ ಆಪತ್ತನ್ನು ತಂದಿದ್ದನು.</verse>
				<verse number="8">ಏತಾನನಿಗೆ ಅಜರ್ಯನೆಂಬ ಒಬ್ಬ ಮಗನಿದ್ದನು.</verse>
				<verse number="9">ಹೆಚ್ರೋನನಿಗೆ ಮೂರು ಜನ ಮಕ್ಕಳು ಇದ್ದರು. ಅವರು - ಯೆರಹ್ಮೇಲ್, ರಾಮ್ ಮತ್ತು ಕೆಲೂಬಾಯ್ ಎಂಬವರು.</verse>
				<verse number="10">ರಾಮನಿಂದ ಜೆಸ್ಸೆವರೆಗಿನ ವಂಶಜರು: ಅಮ್ಮೀನಾದಾಬ್, ಯೆಹೂದ ಗೋತ್ರದ ಪ್ರಮುಖ ವ್ಯಕ್ತಿಯಾದ ನಹಶೋನ,</verse>
				<verse number="11">ಸಲ್ಮನ, ಬೋವಜ,</verse>
				<verse number="12">ಓಬೇದ ಹಾಗೂ ಜೆಸ್ಸೆ.</verse>
				<verse number="13">ಜೆಸ್ಸೆಯ ಏಳು ಜನ ಮಕ್ಕಳು: ಎಲೀಯಾಬ್, ಅಬೀನಾದಾಬ್, ಶಿಮ್ಮ,</verse>
				<verse number="14">ನೆತನೇಲ್, ರದ್ದೈ,</verse>
				<verse number="15">ಓಚೆಮ್ ಮತ್ತು ದಾವೀದ್.</verse>
				<verse number="16">ಅವನ ಇಬ್ಬರು ಹೆಣ್ಣು ಮಕ್ಕಳು: ಚೆರೂಯ ಹಾಗೂ ಅಬೀಗೈಲ ಎಂಬವರು. ಜೆಸ್ಸೆಯ ಮಗಳು ಚೆರೂಯಳಿಗೆ ಅಬೈ, ಯೋವಾಬ್, ಅಸಾಹೇಲ್ ಎಂಬ ಮೂರು ಜನ ಮಕ್ಕಳಿದ್ದರು.</verse>
				<verse number="17">ಅವನ ಇನ್ನೊಬ್ಬ ಮಗಳು ಅಬೀಗೈಲಳು ಇಷ್ಮಾಯೇಲನ ವಂಶಜ ಯೆತೆರ್ ಎಂಬವನನ್ನು ವಿವಾಹವಾಗಿ ಅಮಾಸ ಎಂಬ ಮಗನನ್ನು ಪಡೆದಳು.</verse>
				<verse number="18">ಹೆಚ್ರೋನನ ಮಗ ಕಾಲೇಬ, ಅಜೂಬಳನ್ನು ಮದುವೆಯಾಗಿ ಯೆರ್ಯೋತ್ ಎಂಬ ಮಗಳನ್ನು ಪಡೆದನು. ಆಕೆಯ ಮೂರು ಜನ ಗಂಡುಮಕ್ಕಳು: ಯೇಷೆರ್, ಶೊಬಾಬ್, ಅರ್ದೋನ್ ಎಂಬವರು.</verse>
				<verse number="19">ಅಜೂಬಳ ಮರಣದ ನಂತರ ಕಾಲೇಬನು ಎಫ್ರಾತಳನ್ನು ಮದುವೆ ಆಗಿ ಹೂರ್ ಎಂಬ ಮಗನನ್ನು ಪಡೆದನು.</verse>
				<verse number="20">ಹೂರನಿಗೆ ಊರಿಯ ಎಂಬ ಮಗ ಮತ್ತು ಬೆಚಲೇಲ ಎಂಬ ಮೊಮ್ಮಗ ಇದ್ದರು.</verse>
				<verse number="21">ಹೆಚ್ರೋನ ಅರುವತ್ತು ವರ್ಷದವನಾದಾಗ ಗಿಲ್ಯಾದನ ಸೋದರಿಯಾದ ಮಾಕೀರನ ಮಗಳನ್ನು ಮದುವೆಯಾದನು. ಅವರಿಗೆ ಸೆಗೂಬ ಎಂಬ ಮಗ ಜನಿಸಿದ.</verse>
				<verse number="22">ಸೆಗೂಬನಿಗೆ ಯಾಯೀರ ಎಂಬ ಮಗ ಜನಿಸಿದ. ಯಾಯೀರ ಗಿಲ್ಯಾದನ ಇಪ್ಪತ್ಮೂರು ಪಟ್ಟಣಗಳ ಮೇಲೆ ಆಡಳಿತ ಮಾಡಿದನು.</verse>
				<verse number="23">ಆದರೆ ಗೆಷೂರ್ಯರ ಮತ್ತು ಅರಾಮ್ಯರ ರಾಜ್ಯಗಳವರು ಯಾಯೀರನ ಹಾಗೂ ಕೆನತ್ ಪ್ರಾಂತ್ಯದ ಗ್ರಾಮಗಳನ್ನೂ ಅವುಗಳ ಸಮೀಪದ ಪಟ್ಟಣಗಳನ್ನೂ ಸೇರಿ ಒಟ್ಟು ಅರುವತ್ತು ಪಟ್ಟಣಗಳನ್ನು ಗೆದ್ದುಕೊಂಡರು. ಅಲ್ಲಿ ವಾಸಿಸಿದ್ದ ಎಲ್ಲಾ ಜನರೂ ಗಿಲ್ಯಾದನ ತಂದೆ ಮಾಕೀರನ ವಂಶಜರೇ ಆಗಿದ್ದರು.</verse>
				<verse number="24">ಹೆಚ್ರೋನನು ಮರಣ ಹೊಂದಿದ ನಂತರ ಅವನ ಮಗ ಕಾಲೇಬ್ ತನ್ನ ತಂದೆಯ ವಿಧವೆ ಎಫ್ರಾತಳನ್ನು ಮದುವೆಯಾದನು. ಅವರಿಗೆ ಅಷ್ಹೂರ ಎಂಬ ಮಗ ಜನಿಸಿದ. ತೆಕೋವ ಪಟ್ಟಣವನ್ನು ಕಟ್ಟಿದವನು ಇವನೇ.</verse>
				<verse number="25">ಹೆಚ್ರೋನನ ಚೊಚ್ಚಲ ಮಗ ಯೆರಹ್ಮೇಲನಿಗೆ ಐದು ಜನ ಮಕ್ಕಳು ಇದ್ದರು. ಅವರು - ಹಿರಿಯವನಾದ ರಾಮ್ ಮತ್ತು ಬೂನ, ಓರೆನ್, ಓಚೆಮ್, ಹಾಗೂ ಅಹೀಯ ಎಂಬವರು.</verse>
				<verse number="26">ರಾಮನಿಗೆ ಮಾಚ್, ಯಾಮೀನ್, ಏಕೆರ್ ಎಂಬ ಮೂರು ಮಕ್ಕಳಿದ್ದರು. ಯೆರೆಹ್ಮೇಲನಿಗೆ ಅಟಾರ ಎಂಬ ಇನ್ನೊಬ್ಬ ಹೆಂಡತಿಯಿದ್ದಳು. ಅವಳಿಂದ ಓನಾಮ ಎಂಬ ಮಗ ಜನಿಸಿದ.</verse>
				<verse number="27"></verse>
				<verse number="28">ಓನಾಮನಿಗೆ ಶಮ್ಮೈ, ಮತ್ತು ಯಾದ ಎಂಬ ಇಬ್ಬರು ಮಕ್ಕಳಿದ್ದರು. ಶಮ್ಮೈ ಮಕ್ಕಳು: ನಾದಾಬ್ ಹಾಗೂ ಅಬೀಷೂರ್.</verse>
				<verse number="29">ಅಬೀಷೂರ ಅಬೀಹೈಲ್ ಎಂಬವಳೊಂದಿಗೆ ವಿವಾಹವಾಗಿ ಅಹ್ಬಾನ್, ಮೋಲೀದ್ ಎಂಬಿಬ್ಬರು ಮಕ್ಕಳನ್ನು ಪಡೆದನು.</verse>
				<verse number="30">ಅಬೀಷೂರನ ಸಹೋದರ ನಾದಾಬನಿಗೆ ಸೆಲೆದ್, ಅಪ್ಪಯಿಮ್ ಎಂಬಿಬ್ಬರು ಮಕ್ಕಳಿದ್ದರು. ಆದರೆ ಸೆಲೆದನು ಮಕ್ಕಳಿಲ್ಲದೇ ಮರಣ ಹೊಂದಿದನು.</verse>
				<verse number="31">ಅಪ್ಪಯಿಮ್ ಇಷ್ಷೀಯ ತಂದೆ. ಇಷ್ಷೀ ಶೇಷಾನ್ ನ ತಂದೆ, ಶೇಷಾನನು ಅಹ್ಲ್ಯೋ ತಂದೆ.</verse>
				<verse number="32">ಶಮ್ಮೆಯ ತಮ್ಮನಾದ ಯಾದಾನಿಗೆ ಯೆತೆರ್ ಮತ್ತು ಯೋನಾತಾನ್ ಎಂಬ ಮಕ್ಕಳು ಇದ್ದರು. ಯೆತೆರ್ ಮಕ್ಕಳಿಲ್ಲದೇ ಮಡಿದನು.</verse>
				<verse number="33">ಯೋನಾತಾನನಿಗೆ ಪೆಲಿತ್, ಜಾಜ ಎಂಬ ಮಕ್ಕಳಿದ್ದರು. ಇವರೆಲ್ಲರೂ ಯೆರಹ್ಮೇಲನ ವಂಶಜರು.</verse>
				<verse number="34">ಶೇಷಾನನಿಗೆ ಗಂಡುಮಕ್ಕಳಿರಲಿಲ್ಲ; ಹೆಣ್ಣು ಮಕ್ಕಳೇ ಇದ್ದರು. ಅವನಿಗೆ ಯರ್ಹ ಎಂಬ ಸೇವಕನಿದ್ದನು.</verse>
				<verse number="35">ಅವನಿಗೆ ತನ್ನ ಹೆಣ್ಣು ಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೊಟ್ಟನು. ಅವರಿಗೆ ಜನಿಸಿದ ಮಗನ ಹೆಸರು ಅತ್ತೈ ಎಂದು.</verse>
				<verse number="36">ಅತ್ತೈನಿಂದ ಎಲೀಮಾನವರೆಗಿನ ವಂಶಜರ ಹೆಸರುಗಳು: ಅತ್ತೈ, ನಾತಾನ್, ಜಾಬಾದ,</verse>
				<verse number="37">ಎಫ್ಲಾಲ, ಓಬೇದ್,</verse>
				<verse number="38">ಯೇಹೂವು, ಅಜರ್ಯ,</verse>
				<verse number="39">ಹೆಲೆಚ, ಎಲ್ಲಾಸ,</verse>
				<verse number="40">ಸಿಸ್ಮೈ, ಶಲ್ಲೂಮ,</verse>
				<verse number="41">ಯೆಕಮ್ಯಾಹ ಮತ್ತು ಎಲೀಷಾಮ.</verse>
				<verse number="42">ಕಾಲೇಬನ ಚೊಚ್ಚಲು ಮಗನಿಗೆ ಅಂದರೆ ಯೆರಹ್ಮೇಲನ ಸಹೋದರನಿಗೆ ಮೇಷ ಎಂದು ಹೆಸರಿಡಲಾಗಿತ್ತು. ಮೇಷನು ಜೀಫ್ಯನ ತಂದೆ, ಇವನು ಮಾರೇಷನ ತಂದೆ, ಇವನು ಹೆಬ್ರೋನನ ತಂದೆ,</verse>
				<verse number="43">ಹೆಬ್ರೋನನಿಗೆ ಕೋರಹ, ತಪ್ಪೂಹ, ರೆಕೆಮ್ ಮತ್ತು ಶೆವು ಎಂಬ ನಾಲ್ವರು ಮಕ್ಕಳು ಇದ್ದರು.</verse>
				<verse number="44">ಶೆಮ ರಹಮನ ತಂದೆ, ಯೊರ್ಕೆಯಾಮ್ಯನ ಅಜ್ಜ. ಶೆಮನ ಸಹೋದರ ರೆಕೆಮ ಶಮ್ಮೈಯನ ತಂದೆ,</verse>
				<verse number="45">ಇವನು ಮಾವೋನ್ಯನ ತಂದೆ, ಇವನು ಬೇತ್ಸೂರನ ತಂದೆ.</verse>
				<verse number="46">ಕಾಲೇಬನಿಗೆ ಏಫಾ ಎಂಬ ಉಪಪತ್ನಿ ಇದ್ದಳು. ಅವಳಿಂದ ಅವನಿಗೆ ಹಾರಾನ್, ಮೋಚ, ಗಾಜೇಜ್ ಹುಟ್ಟಿದರು. ಹಾರಾನನಿಗೆ ಗಾಜೇಜ ಎಂಬ ಹೆಸರಿನ ಮಗನಿದ್ದನು.</verse>
				<verse number="47">ಯಾದೈ ಎಂಬವನಿಗೆ ಆರು ಜನ ಮಕ್ಕಳು: ರೆಗೆಮ್, ಯೋತಾಮ್, ಗೇಷಾನ್, ಪೆಲೆಟ್, ಏಪ, ಶಾಫ್ ಎಂಬವರು.</verse>
				<verse number="48">ಕಾಲೇಬನ ಇನ್ನೊಬ್ಬ ಉಪಪತ್ನಿ - ಮಾಕಾ. ಅವಳಿಂದ ಶೆಬಿರ್, ತಿರ್ಹನ ಎಂಬಿಬ್ಬರು ಮಕ್ಕಳು ಜನಿಸಿದರು.</verse>
				<verse number="49">ಅನಂತರ ಅವಳಿಗೆ ಮತ್ತೆ ಇಬ್ಬರು ಮಕ್ಕಳು ಜನಿಸಿದರು: ಮದ್ಮನ್ನ ಪಟ್ಟಣವನ್ನು ಕಟ್ಟಿಸಿದ ಶಾಫ್ ಒಬ್ಬನು. ಮಕ್‍ಬೇನ ಮತ್ತು ಗಿಬ್ಯ ಪಟ್ಟಣಗಳನ್ನು ಕಟ್ಟಿಸಿದ ಶೆವ ಇನ್ನೊಬ್ಬನು. ಇವರಲ್ಲದೆ ಕಾಲೇಬನಿಗೆ ಅಕ್ಸಾಹ ಎಂಬ ಹೆಣ್ಣು ಮಗಳು ಇದ್ದಳು.</verse>
				<verse number="50">ಇನ್ನುಳಿದ ಕಾಲೇಬನ ವಂಶಜರು: ಕಾಲೇಬನಿಗೆ ಅವನ ಹೆಂಡತಿ ಎಫ್ರಾತಳಿಂದ ಜನಿಸಿದ ಚೊಚ್ಚಲ ಮಗನ ಹೆಸರು ಹೂರ ಎಂದು. ಹೂರನ ಮಗ ಶೋಬಾಲ್ - ಕಿರ್ಯತ್ಯಾರೀಮ್ ಪಟ್ಟಣವನ್ನೂ</verse>
				<verse number="51">ಅವನ ಇನ್ನೊಬ್ಬ ಮಗ ಸಲ್ಮ ಬೆತ್ಲೆಹೇಮನ್ನೂ ಅವನ ಮೂರನೆಯ ಮಗ ಹಾರೇಫ್, ಬೇತ್ಗಾದೇರ್ ಪಟ್ಟಣವನ್ನೂ ಕಟ್ಟಿಸಿದರು.</verse>
				<verse number="52">ಕಿರ್ಯತ್ಯಾರೀಮ್ ಪಟ್ಟಣದ ಸ್ಥಾಪಕ ಶೋಬಾಲನು ಹರೋಯೆ ಜನರ, ಮಾನಹತಿಯರ ಅರ್ಧದಷ್ಟು ಜನರ,</verse>
				<verse number="53">ಹಾಗೂ ಕಿರ್ಯತ್ಯಾರೀಮ್‍ನಲ್ಲಿ ವಾಸಿಸುವ ಯೆತೆರಿನವರ, ಪೂತ್ಯರ, ಶುಮಾತ್ಯರ ಹಾಗೂ ಮಿಷ್ರಾಗ್ಯರ ಪೂರ್ವಜನಾಗಿದ್ದನು. ಚೊರ್ರಾತ್ಯರು ಹಾಗೂ ಎಷ್ಟಾವೋಲ್ಯರು ಈ ಗೋತ್ರಗಳಿಗೆ ಸೇರಿದವರು.</verse>
				<verse number="54">ನೆಟೋಫಾ, ಅಟರೋತ್, ಬೇತ್ಯೋವಾಬ್ ಹಾಗೂ ಮಾನಹತಿಯರ ಎರಡು ಗೋತ್ರಗಳಲ್ಲಿ ಒಂದಾದ ಜೊರ್ಗದ ನಿವಾಸಿಗಳಿಗೆ ಬೆತ್ಲೆಹೇಮ್ ಪಟ್ಟಣದ ಸ್ಥಾಪಕ ಸಲ್ಮನು ಮೂಲಪುರುಷ ಆಗಿದ್ದನು.</verse>
				<verse number="55">ಬರವಣಿಗೆಯಲ್ಲಿ ಮತ್ತು ದಾಖಲೆಗಳನ್ನು ನಕಲು ಮಾಡುವುದರಲ್ಲಿ ಪ್ರವೀಣರಾದ ತಿರ್ರಾತ್ಯರು, ಶಿಮ್ಗಾತ್ಯರು, ಸುಕಾತ್ಯರು ಯಾಬೇಚಿನಲ್ಲಿ ವಾಸಿಸಿದ್ದರು. ರೇಕಾಬ್ಬರೊಂದಿಗೆ ಅಂತರ್ ವಿವಾಹ ಮಾಡಿಕೊಂಡ ಕೇನ್ಯರು ಇವರೇ.</verse>
			</chapter>
			<chapter number="3">
				<verse number="1">ದಾವೀದನು ಹೆಬ್ರೋನಿನಲ್ಲಿದ್ದಾಗ ಅವನಿಗೆ ಹುಟ್ಟಿದ ಗಂಡುಮಕ್ಕಳ ಹೆಸರುಗಳು ಇವು: ಅಮ್ನೋನ - ಜೆಸ್ರೀಲಿನ ಅಹೀನೋಮ ಇವನ ತಾಯಿ. ದಾನಿಯೇಲ - ಕರ್ಮೇಲಿನ ಆಬೀಗೈಲಳು ಇವನ ತಾಯಿ.</verse>
				<verse number="2">ಅಬ್ಷಾಲೋಮ - ಗೆಷೂರಿನ ಅರಸ ತಲ್ಮೈಯ ಮಗಳು ಮಾಕ ಇವನ ತಾಯಿ. ಅದೋನಿಯ - ಹಗ್ಗೀತ್ ಇವನ ತಾಯಿ.</verse>
				<verse number="3">ಶೆಫಟ್ಯ - ಅಬೀಟಲಳು ಇವನ ತಾಯಿ. ಇತ್ರಾಮ - ಎಗ್ಲಳು ಇವನ ತಾಯಿ.</verse>
				<verse number="4">ದಾವೀದನು ಹೆಬ್ರೋನಿನಲ್ಲಿ ಆಳ್ವಿಕೆ ಮಾಡಿದ ಏಳೂವರೆ ವರ್ಷಗಳಲ್ಲಿ ಈ ಆರೂ ಜನ ಮಕ್ಕಳು ಅಲ್ಲಿಯೇ ಹುಟ್ಟಿದರು. ಜೆರುಸಲೇಮಿನಲ್ಲಿ ಅವನು ಅರಸನಾಗಿ ಮೂವತ್ಮೂರು ವರ್ಷ ಆಡಳಿತ ಮಾಡಿದನು.</verse>
				<verse number="5">ಅಲ್ಲಿ ಅವನಿಗೆ ಅನೇಕ ಗಂಡುಮಕ್ಕಳು ಹುಟ್ಟಿದರು. ದಾವೀದನ ಹೆಂಡತಿ ಬತ್ಷೂವ ಅಮ್ಮೀಯೇಲನ ಮಗಳು. ಆಕೆ - ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಜನ ಗಂಡುಮಕ್ಕಳಿಗೆ ಜನ್ಮವಿತ್ತಳು.</verse>
				<verse number="6">ಅವನಿಗೆ ಇನ್ನೂ ಒಂಬತ್ತು ಜನ ಗಂಡುಮಕ್ಕಳಿದ್ದರು: ಇಬ್ಹಾರ್, ಎಲೀಷಾಮ, ಎಲೀಫೆಲೆಟ್,</verse>
				<verse number="7">ನೊಗ, ನೆಫೆಗ್, ಯಾಫೀಯ,</verse>
				<verse number="8">ಎಲೀಷಾಮ, ಎಲ್ಯಾದ, ಎಲೀಫೆಲೆಟ್ ಎಂಬವರೇ.</verse>
				<verse number="9">ಇವರಲ್ಲದೆ ದಾವೀದನಿಗೆ ಅವನ ಉಪಪತ್ನಿಯರಿಂದ ಗಂಡುಮಕ್ಕಳಿದ್ದರು; ತಾಮಾರ್ ಎಂಬ ಹೆಣ್ಣುಮಗಳೂ ಇದ್ದಳು.</verse>
				<verse number="10">ಸೊಲೊಮೋನನ ವಂಶದಲ್ಲಿ ಜನಿಸಿದವರ ಹೆಸರುಗಳು ಇಂತಿವೆ: ಸೊಲೊಮೋನ, ರೆಹಬ್ಬಾಮ, ಅಬೀಯ, ಆಸ, ಯೆಹೋಷಾಫಾಟ್,</verse>
				<verse number="11">ಯೆಹೋರಾಮ್, ಅಹಜ್ಯ, ಯೆಹೋವಾಷ್,</verse>
				<verse number="12">ಅಮಚ್ಯ, ಅಜರ್ಯ, ಯೋತಾಮ್,</verse>
				<verse number="13">ಅಹಾಜ್, ಹಿಜ್ಕೀಯ, ಮನಸ್ಸೆ,</verse>
				<verse number="14">ಅಮೋನ್ ಹಾಗು ಯೋಷೀಯ</verse>
				<verse number="15">ಯೋಷೀಯನಿಗೆ ನಾಲ್ಕು ಜನಮಕ್ಕಳು: ಯೋಹಾನಾನ್, ಯೆಹೋಯಾಕೀಮ್, ಚಿದ್ಕೀಯ ಮತ್ತು ಶಲ್ಲೂಮ್.</verse>
				<verse number="16">ಯೆಹೋಯಾಕೀಮನಿಗೆ ಯೆಕೊನ್ಯ ಮತ್ತು ಚಿದ್ಕೀಯ ಎಂಬಿಬ್ಬರು ಮಕ್ಕಳಿದ್ದರು.</verse>
				<verse number="17">ಬಾಬಿಲೋನಿಯರಿಂದ ಸೆರೆಯಾಳಾಗಿ ಒಯ್ಯಲ್ಪಟ್ಟ ಅರಸ ಯೆಕೊನ್ಯನ ವಂಶಜರು ಇವರು: ಯೆಕೊನ್ಯನಿಗೆ ಏಳು ಜನ ಗಂಡುಮಕ್ಕಳು: ಶೆಯಲ್ತೀಯೇಲ್,</verse>
				<verse number="18">ಮಲ್ಕೀರಾಮ್, ಪೆದಾಯ, ಶೆನಚ್ಚರ್, ಯೆಕಮ್ಯ, ಹೋಷಾಮ, ನೆಬದ್ಯ ಎಂಬವರು.</verse>
				<verse number="19">ಪೆದಾಯನಿಗೆ ಜೆರುಬ್ಬಾಬೆಲ್ ಮತ್ತು ಶಿಮ್ಮೀ ಎಂಬಿಬ್ಬರು ಮಕ್ಕಳಿದ್ದರು. ಜೆರುಬ್ಬಾಬೆಲನಿಗೆ ಮೆಷುಲ್ಲಾಮ್, ಹನನ್ಯ ಎಂಬ ಇಬ್ಬರು ಗಂಡುಮಕ್ಕಳು ಹಾಗೂ ಶೆಲೋಮೀತ್ ಎಂಬ ಮಗಳೂ ಇದ್ದಳು.</verse>
				<verse number="20">ಇವರಲ್ಲದೆ ಹಷುಬ, ಓಹೆಲ್, ಬೆರೆಕ್ಯ, ಹಸದ್ಯ, ಯೂಷಬ್ಹೆಸೆದ್ ಎಂಬ ಐವರು ಗಂಡು ಮಕ್ಕಳು ಅವನಿಗಿದ್ದರು.</verse>
				<verse number="21">ಹನನ್ಯನ ಇಬ್ಬರು ಮಕ್ಕಳು: ಪೆಲಟ್ಯ ಮತ್ತು ಯೆಶಾಯ ಎಂಬವರು ಯೆಶಾಯ ರೆಫಾಯನ ತಂದೆ, ಇವನು ಅರ್ನಾನನ ತಂದೆ, ಇವನು ಓಬದ್ಯನ ತಂದೆ, ಇವನು ಶೆಕನ್ಯನ ತಂದೆ.</verse>
				<verse number="22">ಶೆಕನ್ಯನಿಗೆ ಶೆಮಾಯ ಎಂಬ ಮಗನೂ ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ, ಶೆಷಾಟ್ ಎಂಬ ಐದು ಜನ ಮೊಮ್ಮಕ್ಕಳೂ ಇದ್ದರು.</verse>
				<verse number="23">ನೆಯರ್ಯನಿಗೆ ಎಲ್ಯೋಗೇನೈ, ಹಿಜ್ಕೀಯ, ಅಜ್ರೀಕಾಮ್ ಎಂಬ ಮೂವರು ಮಕ್ಕಳಿದ್ದರು.</verse>
				<verse number="24">ಎಲ್ಯೋಗೇನೈಯ ಏಳು ಜನ ಮಕ್ಕಳು: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ, ಅನಾನೀ ಎಂಬವರು.</verse>
			</chapter>
			<chapter number="4">
				<verse number="1">ಯೆಹೂದನ ವಂಶಜರು: ಪೆರೆಚ್, ಹೆಚ್ರೋನ್, ಕರ್ಮೀ, ಹೂರ್ ಮತ್ತು ಶೋಬಾಲ್.</verse>
				<verse number="2">ಶೋಬಾಲ್ ರೆವಾಯನ ತಂದೆ, ಇವನು ಯಹತನ ತಂದೆ. ಇವನು ಚೊರ್ರದಲ್ಲಿ ವಾಸಿಸಿದ ಜನಾಂಗದ ಮೂಲಪಿತೃಗಳಾದ ಅಹೂಮೈ ಹಾಗು ಲಹದ್ ಎಂಬವರ ತಂದೆ.</verse>
				<verse number="3">ಕಾಲೇಬನಿಗೆ ಅವನ ಹೆಂಡತಿ ಎಫ್ರಾತಹಳಿಂದ ಜನಿಸಿದ ಚೊಚ್ಚಲು ಮಗ ಹೂರನು. ಅವನ ವಂಶಜರು ಬೆತ್ಲೆಹೇಮ್ ಪಟ್ಟಣವನ್ನು ಕಟ್ಟಿಸಿದರು. ಹೂರನಿಗೆ ಏತಾಮ, ಪೆನುವೇಲ, ಏಜಾರ್ ಎಂಬ ಮೂವರು ಮಕ್ಕಳಿದ್ದರು. ಏತಾಮನಿಗೆ ಇಜ್ರೆಯೇಲ್, ಇಷ್ಮ, ಇಬ್ಬಾಷ್ ಎಂಬ ಮೂರು ಜನ ಗಂಡುಮಕ್ಕಳೂ ಹಚೆಲೆಲ್ ಪೋನೀ ಎಂಬ ಮಗಳೂ ಇದ್ದರು. ಪೆನೂವೇಲ್, ಗೆದೋರ್ ಪಟ್ಟಣವನ್ನೂ ಏಜೆರ್, ಹುಷಾ ಪಟ್ಟಣವನ್ನೂ ಸ್ಥಾಪಿಸಿದರು.</verse>
				<verse number="4"></verse>
				<verse number="5">ತೆಕೋವ ಪಟ್ಟಣವನ್ನು ಸ್ಥಾಪಿಸಿದ ಅಷ್ಹೂರನಿಗೆ ಹೆಲಾಹ, ನಾರಾ ಎಂಬ ಪತ್ನಿಯರು ಇದ್ದರು.</verse>
				<verse number="6">ನಾರಾಳಿಂದ ಅಹುಜ್ಜಾಮ್, ಹೇಫರ್, ತೇಮಾನಿ, ಅಹಷ್ಟಾರ್ಯ ಎಂಬ ನಾಲ್ವರು ಮಕ್ಕಳು ಜನಿಸಿದರು.</verse>
				<verse number="7">ಅಷ್ಹೂರನಿಗೆ ಹೆಲಾಹ ಎಂಬವಳಿಂದ ಚೆರೆತ್, ಇಚ್ಹಾರ್, ಎತ್ನಾನ್ ಎಂಬ ಗಂಡುಮಕ್ಕಳು ಜನಿಸಿದರು.</verse>
				<verse number="8">ಅನೂಬ್, ಚೊಬೇಬ ಎಂಬವರ ತಂದೆ ಕೋಚ. ಇವನು ಹಾರುಮನ ಮಗ ಅಹರ್ಹೇಲನ ವಂಶಜರ ಮೂಲಪುರುಷ.</verse>
				<verse number="9">ಯಾಬೇಚ್ ಎಂಬವನು ಒಬ್ಬನಿದ್ದನು. ಅವನು ತನ್ನ ಕುಟುಂಬದಲ್ಲಿ ಬಹಳ ಗೌರವಾನ್ವಿತ ವ್ಯಕ್ತಿ. ಅವನು ಹುಟ್ಟುವಾಗ ಪ್ರಸವವೇದನೆ ಅಧಿಕವಾಗಿದ್ದರಿಂದ ಅವನ ತಾಯಿ, ಯಾಬೇಚ ಎಂಬ ಹೆಸರನ್ನು ಅವನಿಗೆ ಕೊಟ್ಟಳು.</verse>
				<verse number="10">ಆದರೆ ಯಾಬೇಚ, “ಸರ್ವೇಶ್ವರಾ, ನನ್ನನ್ನು ಆಶೀರ್ವದಿಸಿರಿ, ನನ್ನ ಭೂಮಿಯನ್ನು ವಿಸ್ತರಿಸಿರಿ. ನನ್ನೊಡನೆ ಇದ್ದು ನನಗೆ ನೋವನ್ನುಂಟುಮಾಡುವ ಎಲ್ಲಾ ದುಷ್ಟಶಕ್ತಿಗಳಿಂದ ನನ್ನನ್ನು ಕಾಪಾಡಿ,” ಎಂದು ಸರ್ವೇಶ್ಚರನಿಗೆ ಪ್ರಾರ್ಥಿಸಿದನು. ಸರ್ವೇಶ್ವರ ಅವನ ಪ್ರಾರ್ಥನೆಯನ್ನು ಆಲಿಸಿ, ಕೇಳಿದ್ದನ್ನು ದಯಪಾಲಿಸಿದರು.</verse>
				<verse number="11">ಶೂಹನ ಸಹೋದರ ಕೆಲೂಬನಿಗೆ ಮೆಹೀರ ಎಂಬ ಮಗನಿದ್ದನು. ಮೆಹೀರನು ಎಷ್ಟೋನನ ತಂದೆ;</verse>
				<verse number="12">ಇವನಿಗೆ ಬೇತ್ರಾಫ, ಪಾಸೇಹ, ತೆಹಿನ್ನ ಎಂಬ ಮೂವರು ಮಕ್ಕಳು ಇದ್ದರು. ತೆಹಿನ್ನ ನಾಹಷ್ ಪಟ್ಟಣದ ಸ್ಥಾಪಕ. ಈ ಜನರ ವಂಶಜರು ರೇಕಾ ಎಂಬಲ್ಲಿ ವಾಸಿಸಿದ್ದರು.</verse>
				<verse number="13">ಕೆನಜನ ಮಕ್ಕಳು - ಒತ್ನೀಯೇಲ್, ಸೆರಾಯ ಎಂಬವರು. ಒತ್ನೀಯೇಲನಿಗೆ ಹತತ್, ಮೆಯೋನೋತೈ ಎಂಬಿಬ್ಬರು ಮಕ್ಕಳಿದ್ದರು.</verse>
				<verse number="14">ಮೆಯೋನೋತೈ, ಒಫ್ರಾಹನ ತಂದೆ. ಸೆರಾಯ, ಯೋವಾಬನ ತಂದೆ. ಎಲ್ಲಾ ಕುಶಲ ಕೆಲಸಗಾರರು ವಾಸಿಸಿದ ಶಿಲ್ಪಿಗಳ ಕಣಿವೆಯ ಸ್ಥಾಪಕನು ಇವನೇ.</verse>
				<verse number="15">ಯೆಫುನ್ನೆಯ ಮಗ ಕಾಲೇಬನಿಗೆ ಈರು, ಏಲ, ನಾಮ್ ಎಂಬ ಮೂರು ಜನ ಮಕ್ಕಳಿದ್ದರು. ಏಲನು ಕೆನಜ್ ನ ತಂದೆ.</verse>
				<verse number="16">ಯೆಬಲ್ಲೆಲೇಲನ ಮಕ್ಕಳು - ಜೀಫ್, ಜೀಫಾ, ತೀರ್ಯ, ಅಸರೇಲ್ ಎಂಬವರು.</verse>
				<verse number="17">ಎಜ್ರನಿಗೆ ಯೆತೆರ್, ಮೆರೆದ್, ಏಫೇರ್, ಯಾಲೋನ್ ಎಂಬ ನಾಲ್ವರು ಮಕ್ಕಳಿದ್ದರು. ಮೆರೆದನು ಈಜಿಪ್ಟಿನ ಅರಸನ ಮಗಳು ಬಿತ್ಯ ಎಂಬವಳನ್ನು ಮದುವೆಯಾಗಿ ಮಿರ್ಯಾಮ್ ಎಂಬ ಮಗಳನ್ನೂ ಶಮ್ಮೈ, ಎಷ್ಟೆಮೋವ ಎಂಬ ಇಬ್ಬರು ಗಂಡುಮಕ್ಕಳನ್ನೂ ಪಡೆದನು. ಇಷ್ಟಹನು ಎಷ್ಟಮೋವ್ ಪಟ್ಟಣವನ್ನು ಕಟ್ಟಿಸಿದನು. ಮೆರೆದನು ಸಹ ಯಾದ್ ಕುಲದ ಸ್ತ್ರೀಯೊಬ್ಬಳನ್ನು ಮದುವೆಯಾಗಿ ಅವಳಿಂದ ಮೂರು ಜನ ಮಕ್ಕಳನ್ನು ಪಡೆದನು: ಗೆದೋರ್ಯ ಪಟ್ಟಣ ಕಟ್ಟಿಸಿದ ಯೆರೆದ್, ಸೋಕೋವಿ ಪಟ್ಟಣದ ಸ್ಥಾಪಕ ಹೆಬಿರ್ ಮತ್ತು ಜಾನೋಹ ಪಟ್ಟಣದ ಸ್ಥಾಪಕ ಯೆಕೂತೀಯೇಲ್ ಎಂಬವರೇ ಆ ಮೂರು ಮಂದಿ.</verse>
				<verse number="18"></verse>
				<verse number="19">ಹೋದೀಯನು ನಹಮನ ತಂಗಿಯನ್ನು ಮದುವೆಯಾದನು. ಇವರ ಸಂತತಿಯವರು ಕೆಯೀಲದಲ್ಲಿ ವಾಸಿಸಿದ ಗರ್ಮ್ಯ ಗೋತ್ರದ ಮತ್ತು ಎಷ್ಟೆಮೋವಾದಲ್ಲಿ ವಾಸಿಸಿದ ಮಾಕಾತ್ ಗೋತ್ರದ ಪೂರ್ವಜರು.</verse>
				<verse number="20">ಶೀಮೋನನ ಮಕ್ಕಳು - ಅಮ್ನೋನ್, ರಿನ್ನ, ಬಿನ್ಹಾನಾನ್, ತೀಲೋನ್ ಎಂಬವರು. ಇಷ್ಷೀಯ ಮಕ್ಕಳು - ಜೋಹೇತ್, ಬೆನ್‍ಜೋಹೇತ್ ಎಂಬವರು.</verse>
				<verse number="21">ಶೇಲನು ಯೆಹೂದನ ಮಕ್ಕಳಲ್ಲಿ ಒಬ್ಬನು. ಅವನ ವಂಶೀಯರಲ್ಲಿ ಕೆಲವರ ಹೆಸರುಗಳು ಇಂತಿವೆ: ಲೇಕಾಹ್ಯರ ಪಟ್ಟಣದ ಸ್ಥಾಪಕ ಏರ್; ಮರೇಷತ್‍ನ ಸ್ಥಾಪಕ ಲದ್ದ; ಬೇತೆಷ್ಬೇಯ ಪಟ್ಟಣದಲ್ಲಿ ವಾಸಿಸಿದ ನೇಕಾರರ ಕುಟುಂಬಗಳು;</verse>
				<verse number="22">ಯೊಕೀಮನು ಹಾಗು ಕೋಜೇಬ ಪಟ್ಟಣಗಳ ನಿವಾಸಿಗಳು; ಮೋವಾಬ್ಯರ ಸ್ತ್ರೀಯರನ್ನು ಮದುವೆಯಾಗಿ ಬೆತ್ಲೆಹೇಮಿನಲ್ಲಿ ನೆಲೆಸಿದ ಯೋವಾಷ ಹಾಗು ಸಾರಾಫ. (ಈ ಸಂಪ್ರದಾಯಗಳು ಬಹಳ ಪುರಾತನವಾದವು).</verse>
				<verse number="23">ಅವರು ಅರಸನ ಸೇವೆಯಲ್ಲಿ ಕುಂಬಾರರಾಗಿದ್ದು ನೆಟಾಯಿಮ್ ಮತ್ತು ಗೆದೇರ ಪಟ್ಟಣಗಳಲ್ಲಿ ವಾಸಿಸಿದ್ದರು.</verse>
				<verse number="24">ಸಿಮೆಯೋನನಿಗೆ ನೆಮೂವೇಲ್, ಯಾಮೀನ್, ಯಾರೀದ್, ಜೆರಹ, ಸೌಲ ಎಂಬ ಐವರು ಮಕ್ಕಳಿದ್ದರು.</verse>
				<verse number="25">ಸೌಲನ ಮಗ ಶಲ್ಲುಮ್, ಮಿಬ್ಸಾಮ್ ಅವನ ಮೊಮ್ಮಗ, ಮಿಷ್ಮ ಅವನ ಮರಿಮಗ.</verse>
				<verse number="26">ಅನಂತರ ಮಿಷ್ಮಾನನಿಂದ ಹಮ್ಮೂವೇಲ್, ಜಕ್ಕೂರ್, ಶಿಮ್ಮೀ ಎಂಬವರ ಮುಖಾಂತರ ಈ ವಂಶಾವಳಿ ಮುಂದುವರಿಯಿತು.</verse>
				<verse number="27">ಶಿಮ್ಮಿಗೆ ಹದಿನಾರು ಜನ ಗಂಡುಮಕ್ಕಳೂ ಆರುಜನ ಹೆಣ್ಣುಮಕ್ಕಳೂ ಇದ್ದರು. ಆದರೆ ಅವನ ಸಹೋದರರಿಗೆ ಕಡಿಮೆ ಸಂಖ್ಯೆಯಲ್ಲಿ ಮಕ್ಕಳಿದ್ದುದರಿಂದ ಯೆಹೂದ ಕುಲದಷ್ಟು ಸಿಮೆಯೋನನ ಕುಲ ಬೆಳೆಯಲಿಲ್ಲ.</verse>
				<verse number="28">ಅರಸ ದಾವೀದನ ಕಾಲದವರೆಗೆ ಸಿಮೆಯೋನನ ವಂಶಜರು ವಾಸಿಸಿದ ಪಟ್ಟಣಗಳು ಇವು: ಬೇರ್ಷೆಬ, ಮೋಲಾದ, ಹಚರ್ ಷೂವಾಲ್,</verse>
				<verse number="29">ಬಿಲ್ಹ, ಎಚೆಮ್, ತೋಲಾದ್,</verse>
				<verse number="30">ಬೆತೂವೇಲ್, ಹೊರ್ಮ, ಚಿಕ್ಲಗ್,</verse>
				<verse number="31">ಬೇತ್‍ಮರ್ಕಾಬೋತ್, ಹಚರ್ ಸೂಸೀಮ್, ಬೇತ್ ಬಿರೀ, ಶಾರಯಿಮ್.</verse>
				<verse number="32">ಅವರು ಇನ್ನೂ ಬೇರೆ ಐದು ಸ್ಥಳಗಳಲ್ಲಿ ಅಂದರೆ ಏಟಾಮ್, ಅಯಿನ್, ರಿಮ್ಮೋನ್, ತೋಕೆನ್, ಆಷಾನ್ ಹಾಗು</verse>
				<verse number="33">ಅವುಗಳ ಸುತ್ತಲಿನ ಗ್ರಾಮಗಳಲ್ಲಿ ಬಾಲ್ ಪಟ್ಟಣದವರೆಗೆ ವಾಸಿಸಿದರು. ಇವು, ಅವರು ತಮ್ಮ ಕುಟುಂಬಗಳ ಮತ್ತು ತಾವು ವಾಸಿಸಿದ ಸ್ಥಳಗಳ ಬಗ್ಗೆ ಇಟ್ಟ ದಾಖಲೆಗಳಾಗಿವೆ.</verse>
				<verse number="34">ತಮ್ಮ ತಮ್ಮ ಗೋತ್ರಗಳಲ್ಲಿ ಇವರು ಪ್ರಮುಖರಾಗಿದ್ದರು: ಮೆಷೋಬಾಬ್, ಯಮ್ಲೇಕ್, ಅಮಚ್ಯನ ಮಗ ಯೋಷ,</verse>
				<verse number="35">ಯೋವೇಲ್, ಯೋಷಿಬ್ಯನ ಮಗನೂ ಸೆರಾಯನ ಮೊಮ್ಮಗನೂ ಅಸಿಯೇಲನ ಮರಿಮಗನೂ ಆದ ಯೇಹೂ,</verse>
				<verse number="36">ಎಲ್ಯೋವೇನೈ, ಯಾಕೋಬ, ಯೆಷೋಹಾಯ, ಅಸಾಯ, ಅದೀಯೇಲ್, ಯೆಸೀಮಿಯೇಲ್, ಬೆನಾಯ,</verse>
				<verse number="37">ಶಮಾಯನ ಮಗ ಶಿಮ್ರಿಯಿಂದ ಹುಟ್ಟಿದ ಯೆದಾಯನ ಮರಿಮಗನೂ ಅಲ್ಲೋನನ ಮೊಮ್ಮಗನೂ ಶಿಪ್ಫಿಯ ಮಗನೂ ಆದ ಜೀಜ.</verse>
				<verse number="38">ಅವರ ಕುಟುಂಬಗಳು ಬೆಳೆಯುತ್ತಾ ಹೋದವು.</verse>
				<verse number="39">ಆದುದರಿಂದ ಅವರು ಪಶ್ಚಿಮದಿಕ್ಕಿನ ಕಡೆಗೆ ಗೆದೋರ್ ವರೆಗೆ ಪಸರಿಸಿದರು. ಆ ಪಟ್ಟಣದ ಪೂರ್ವದಿಕ್ಕಿನಲ್ಲಿರುವ ಸ್ಥಳಗಳಲ್ಲಿ ತಮ್ಮ ಕುರಿಗಳನ್ನು ಮೇಯಿಸುತ್ತಿದ್ದರು.</verse>
				<verse number="40">ಅಲ್ಲಿಯ ವಿಶಾಲ ಪ್ರದೇಶದಲ್ಲಿ ಸುಖಸಮೃದ್ಧಿಯುಳ್ಳ ಫಲವತ್ತಾದ ಹಸಿರುಗಾವಲು ಭೂಮಿ ಅವರಿಗೆ ದೊರೆಯಿತು. ಇವರಿಗಿಂತ ಮೊದಲು ಅಲ್ಲಿ ಹಾಮ್ಯರ್ ಜನಾಂಗದವರು ನೆಲೆಸಿದ್ದರು.</verse>
				<verse number="41">ಯೆಹೂದದ ಅರಸ ಹಿಜ್ಕೀಯನ ಕಾಲದಲ್ಲಿ ಮೇಲೆ ನಮೂದಿಸಿದ ಪುರುಷರು ಅಲ್ಲಿ ವಾಸಿಸುತ್ತಿದ್ದ ಹಾಮ್ಯರನ್ನೂ ಮೆಗೂನ್ಯರನ್ನೂ ಜಯಿಸಿ ಎಲ್ಲರನ್ನೂ ನಿರ್ನಾಮ ಮಾಡಿದರು. ತಮ್ಮ ಆಡುಕುರಿಗಳಿಗಾಗಿ ಧಾರಾಳವಾಗಿ ಹುಲ್ಲುಗಾವಲುಗಳಿದ್ದುದರಿಂದ ಅಲ್ಲಿಯೇ ಸ್ಥಿರವಾಗಿ ನೆಲೆಸಿದರು.</verse>
				<verse number="42">ಸಿಮೆಯೋನನ ಕುಲದ ಇತರ ಐದುನೂರು ಜನ ಸದಸ್ಯರು ಸೇಯೀರ್ ಬೆಟ್ಟಪ್ರದೇಶದ ಮೇಲೆ ದಾಳಿಮಾಡಿದರು. ಇಷ್ಷೀಯ ಮಕ್ಕಳಾದ ಪೆಲಟ್ಯ, ನೆಗರ್ಯ, ರೆಫಾಯ, ಉಜ್ಜೀಯೇಲ್ ಎಂಬವರು ಅವರ ಮುಖ್ಯಸ್ಥರು.</verse>
				<verse number="43">ಅಲ್ಲಿ ಅವರು, ಅಳಿದುಳಿದಿದ್ದ ಅಮಾಲೇಕ್ಯರನ್ನು ಸಂಹರಿಸಿ ತಾವೇ ಅಲ್ಲಿ ನೆಲೆಸಿದರು.</verse>
			</chapter>
			<chapter number="5">
				<verse number="1">ಯಕೋಬನ ಮಕ್ಕಳಲ್ಲಿ ಹಿರಿಯವನಾದ ರೂಬೇನನ ವಂಶಜರು ಇವರು: (ರೂಬೇನ್ ತನ್ನ ತಂದೆಯ ಉಪಪತ್ನಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದರಿಂದ ಚೊಚ್ಚಲು ಮಗನ ಹಕ್ಕುಬಾಧ್ಯತೆಗಳನ್ನು ಕಳೆದುಕೊಂಡನು. ಆ ಹಕ್ಕುಗಳು ಜೋಸೆಫನಿಗೆ ಕೊಡಲ್ಪಟ್ಟವು;</verse>
				<verse number="2">ಯೆಹೂದನ ಕುಲ ಅತಿ ಬಲಶಾಲಿಯಾಗಿ ಎಲ್ಲಾ ಕುಲಗಳಿಗೆ ನಾಯಕನೊಬ್ಬನನ್ನು ಒದಗಿಸಿಕೊಟ್ಟಿತು.)</verse>
				<verse number="3">ಯಕೋಬನ ಮಕ್ಕಳಲ್ಲಿ ಹಿರಿಯವನಾದ ರೂಬೇನನಿಗೆ ಹನೋಕ್, ಫಲ್ಲೂ, ಹೆಚ್ರೋನ್, ಕರ್ಮೀ ಎಂಬ ನಾಲ್ಕು ಜನ ಮಕ್ಕಳಿದ್ದರು.</verse>
				<verse number="4">ಯೋವೇಲನ ವಂಶಜರು: ಶೆಮಾಯ, ಗೋಗ್, ಶಿಮ್ಮೀ, ಮೀಕ, ರೆವಾಯ, ಬಾಳ್ ಮತ್ತು ಬೇರ ಎಂಬವರು. ಕುಲನಾಯಕ ಬೇರನನ್ನು ಅಸ್ಸೀರಿಯದ ಅರಸ ತಿಲ್ಗತ್ಪಿಲ್ನೆಸರನು ಸೆರೆಹಿಡಿದು ಗಡೀಪಾರು ಮಾಡಿದನು.</verse>
				<verse number="5"></verse>
				<verse number="6"></verse>
				<verse number="7">ಕುಟುಂಬ ದಾಖಲೆಗಳು ರೂಬೇನನ ಗೋತ್ರದಲ್ಲಿ ಪಟ್ಟಿಮಾಡಿದ ಕುಲನಾಯಕರ ಹೆಸರುಗಳು: ಯೇಗೀಯೇಲ್, ಜೆಕರ್ಯ,</verse>
				<verse number="8">ಅಜಾಜನ ಮಗನೂ ಶೆಮಾಯನ ಮೊಮ್ಮಗನೂ ಆದ ಬೆಳ. ಈ ಗೋತ್ರದವರು ಅರೋಯೇರದಲ್ಲಿಯೂ ಅಲ್ಲಿಂದ ನೆಬೋ ಹಾಗೂ ಬಾಳ್ಮೆಯೋನ್ ಸ್ಥಳಗಳವರೆಗಿನ ಪ್ರದೇಶಗಳಲ್ಲಿ ವಾಸಿಸಿದರು.</verse>
				<verse number="9">ಅವರಿಗೆ ಗಿಲ್ಯಾದಿನ ಪ್ರದೇಶದಲ್ಲಿ ಅನೇಕ ಕುರಿಮಂದೆಗಳು ಇದ್ದವು. ಆದುದರಿಂದ ಯುಫ್ರೆಟಿಸ್ ನದಿಯವರೆಗೆ ಹಬ್ಬಿಕೊಂಡಿದ್ದ ಪರ್ವತದಲ್ಲಿನ ಕಾಡಿನವರೆಗೆ ಎಲ್ಲಾ ಪ್ರದೇಶವನ್ನು ವಶಪಡಿಸಿಕೊಂಡಿದ್ದರು.</verse>
				<verse number="10">ಅರಸ ಸೌಲನ ಕಾಲದಲ್ಲಿ ರೂಬೇನ್ ಗೋತ್ರದವರು ಹಗ್ರೀಯರ ಮೇಲೆ ದಾಳಿಮಾಡಿ, ಯುದ್ಧದಲ್ಲಿ ಅವರೆಲ್ಲರನ್ನೂ ಸಂಹರಿಸಿ, ಗಿಲ್ಯಾದಿನ ಪೂರ್ವಭಾಗದ ಪ್ರದೇಶವನ್ನು ಆಕ್ರಮಿಸಿಕೊಂಡರು.</verse>
				<verse number="11">ರೂಬೇನನ ಗೋತ್ರದವರು ವಾಸಿಸಿದ್ದ ಸ್ಥಳದ ಉತ್ತರಕ್ಕೆ ಬಾಷಾನಿನ ಪ್ರದೇಶದಲ್ಲಿ ಪೂರ್ವದಲ್ಲಿರುವ ಸಲ್ಕದವರೆಗೆ ಗಾದ್ ಕುಲದವರು ವಾಸಿಸಿದರು.</verse>
				<verse number="12">ಈ ಗೋತ್ರದಲ್ಲಿ ಯೋವೇಲ ಪ್ರಮುಖನು. ಶಾಫಾಮ್‍ ದ್ವಿತೀಯನು. ಯನ್ನೈ ಮತ್ತು ಶಾಫಾಟ್ ಅವರು ಬಾಷಾನಿನಲ್ಲಿದ್ದ ಇವರ ಗೋತ್ರಗಳ ಸಂಸ್ಥಾಪಕರು.</verse>
				<verse number="13">ಗೋತ್ರದ ಇತರ ಸದಸ್ಯರು ಸೇರಿದ ಏಳು ಕುಲಗಳವರು: ಮೀಕಾಯೇಲ್, ಮೆಷುಲ್ಲಾಮ್,‍ ಶೆಬ, ಯೋರೈ, ಯಕ್ಕಾನ್, ಜೀಯ ಮತ್ತು ಏಬೆರ್ ಎಂಬವರು.</verse>
				<verse number="14">ಹೂರೀಯ ಮಗ ಅಬೀಹೈಲನ ವಂಶಜರು: ಅಬೀಹೈಲ, ಹೂರೀಯ, ಯಾರೋಹ, ಗಿಲ್ಯಾದ, ಮೀಕಾಯೇಲ, ಯೆಷೀಷೈಯ, ಯಹ್ದೋವಿ, ಅಹೀಬೂಜ ಎಂಬವರು.</verse>
				<verse number="15">ಅಬ್ದೀಯೇಲನ ಮಗನೂ ಗೂನೀಯ ಮೊಮ್ಮಗನೂ ಆದ ಅಹೀಯು ಈ ಗೋತ್ರಗಳ ಮುಖ್ಯಸ್ಥನಾಗಿದ್ದನು.</verse>
				<verse number="16">ಅವರು ಬಾಷಾನ್ ಮತ್ತು ಗಿಲ್ಯಾದ್ ಪ್ರದೇಶಗಳಲ್ಲಿಯ ಪಟ್ಟಣಗಳಲ್ಲಿಯೂ ಶಾರೋನಿನ ಹಸಿರುಗಾವಲುಗಳ ಪ್ರದೇಶಗಳಲ್ಲಿಯೂ ನೆಲೆಸಿದರು.</verse>
				<verse number="17">ಈ ದಾಖಲೆಗಳನ್ನು ಯೆಹೂದ ಅರಸ ಯೋತಾಮನ ಹಾಗು ಇಸ್ರಯೇಲ ಅರಸ ಯಾರೊಬ್ಬಾಮನ ಆಳ್ವಿಕೆಯ ದಿನಗಳಲ್ಲಿ ಸಂಗ್ರಹಿಸಲಾಯಿತು.</verse>
				<verse number="18">ರೂಬೇನ್, ಗಾದ್ ಮತ್ತು ಪೂರ್ವದಲ್ಲಿಯ ಮನಸ್ಸೆ ಕುಲಗಳಲ್ಲಿ ನಲವತ್ತನಾಲ್ಕು ಸಾವಿರದ ಏಳುನೂರ ಅರವತ್ತು ಮಂದಿ ಸೈನಿಕರು ಇದ್ದರು. ಅವರು ಗುರಾಣಿಗಳನ್ನೂ ಖಡ್ಗಗಳನ್ನೂ ಬಿಲ್ಲುಬಾಣಗಳನ್ನೂ ಉಪಯೋಗಿಸುವುದರಲ್ಲಿ ಉತ್ತಮ ತರಬೇತಿ ಹೊಂದಿದ್ದರು.</verse>
				<verse number="19">ಅವರು ಯೆಟೂರ್, ನಾಫೀಷ್, ನೋದಾಬ್ ಗಳಲ್ಲಿಯ ಹಗ್ರೀಯರ ವಿರುದ್ಧ ಯುದ್ಧಮಾಡಿದರು.</verse>
				<verse number="20">ಅವರು ದೇವರಲ್ಲಿ ನಂಬಿಕೆಯನ್ನಿಟ್ಟು ಸಹಾಯಕ್ಕಾಗಿ ಪ್ರಾರ್ಥಿಸಿದರು. ದೇವರು ಅವರ ಪ್ರಾರ್ಥನೆಯನ್ನು ಆಲಿಸಿ ಹಗ್ರೀಯರನ್ನೂ ಅವರೊಂದಿಗೆ ಒಪ್ಪಂದ ಮಾಡಿಕೊಂಡವರನ್ನೂ ಸೋಲಿಸಿ ಅವರ ಮೇಲೆ ಜಯಹೊಂದುವಂತೆ ಸಹಾಯ ಮಾಡಿದರು.</verse>
				<verse number="21">ಅವರು ವೈರಿಗಳಿಂದ ಐವತ್ತು ಸಾವಿರ ಒಂಟೆಗಳನ್ನೂ ಎರಡು ಲಕ್ಷ ಐವತ್ತು ಸಾವಿರ ಕುರಿಗಳನ್ನೂ ಎರಡು ಸಾವಿರ ಕತ್ತೆಗಳನ್ನೂ ವಶಪಡಿಸಿಕೊಂಡರಲ್ಲದೆ, ಒಂದು ಲಕ್ಷ ಜನರನ್ನು ಯುದ್ಧಕೈದಿಗಳನ್ನಾಗಿ ಸೆರೆಹಿಡಿದರು.</verse>
				<verse number="22">ಯುದ್ಧವು ದೇವರ ಚಿತ್ತಾನುಸಾರವಾದದ್ದರಿಂದ ಅವರು ಅನೇಕ ವೈರಿಗಳನ್ನು ಸಂಹರಿಸಿದರು ಮತ್ತು ತಾವು ಸೆರೆಯಾಗಿ ಹೋಗುವ ಕಾಲದವರೆಗೆ ಅಲ್ಲಿಯೇ ನೆಲೆಸಿದರು.</verse>
				<verse number="23">ಪೂರ್ವದಲ್ಲಿದ್ದ ಮನಸ್ಸೆ ಜನಾಂಗದವರು ಬಾಳ್ ಹೆರ್ಮೋನ್, ಸೆನೀರ್, ಹೆರ್ಮೋನ್ ಪರ್ವತದವರೆಗಿನ ಬಾಷಾನಿನ ಪ್ರದೇಶದಲ್ಲಿ ನೆಲೆಸಿದರು. ಅವರ ಜನಸಂಖ್ಯೆ ಹೆಚ್ಚು ವೃದ್ಧಿಗೊಂಡಿತು.</verse>
				<verse number="24">ಅವರ ಗೋತ್ರಗಳ ಮುಖ್ಯಸ್ಥರು: ಏಫೆರ್, ಇಷೀ, ಎಲೀಯೆಲ್, ಅಜ್ರಿಯೇಲ್, ಯೆರೆಮೀಯ, ಹೋದವ್ಯ, ಯೆಹ್ತೀಯೇಲ್ ಎಂಬವರು. ಇವರೆಲ್ಲರೂ ಪ್ರಖ್ಯಾತ ಸೈನಿಕರೂ ತಮ್ಮ ಗೋತ್ರಗಳ ನಾಯಕರೂ ಆಗಿದ್ದರು.</verse>
				<verse number="25">ಆದರೆ ಜನರು ತಮ್ಮ ಪಿತೃಗಳ ದೇವರಿಗೆ ಅವಿಧೇಯರಾದರು. ಆ ಪ್ರದೇಶದಿಂದ ದೇವರೇ ಹೊರದೂಡಿದ ಬೇರೆ ಜನಾಂಗಗಳ ದೇವತೆಗಳನ್ನು ಪೂಜಿಸಿದರು.</verse>
				<verse number="26">ಆದುದರಿಂದ ಅಸ್ಸೀರಿಯದ ರಾಜಪೂಲ್ (ಇವನಿಗೆ ತಿಲ್ಗತ್ಪಿಲೆಸರ್ ಎಂಬ ಹೆಸರೂ ಇದೆ) ಅವರ ಮೇಲೆ ದಾಳಿಮಾಡುವಂತೆ ಇಸ್ರಯೇಲ್ ದೇವರು ಪ್ರೇರಿಸಿದರು. ಅವನು ರೂಬೇನ್, ಗಾದ್ ಮತ್ತು ಪೂರ್ವದಲ್ಲಿಯ ಮನಸ್ಸೆ ಗೋತ್ರ ಗೋತ್ರಗಳವರನ್ನು ಗಡೀಪಾರು ಮಾಡಿ ಅವರನ್ನು ಹಲಹ, ಹಾಬೋರ್, ಹಾರ ಎಂಬ ಪ್ರಾಂತ್ಯಗಳಿಗೂ ಗೋಜಾನ್ ನದಿಯ ಪ್ರದೇಶಗಳಿಗೂ ಸೆರೆ ಒಯ್ದನು. ಅವರು ಅಲ್ಲಿಯೇ ನೆಲೆಸುವಂತೆ ಮಾಡಿದನು.</verse>
			</chapter>
			<chapter number="6">
				<verse number="1">ಲೇವಿಯ ಮೂವರು ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ.</verse>
				<verse number="2">ಕೆಹಾತ್ ನಿಗೆ ನಾಲ್ವರು ಪುತ್ರರು ಇದ್ದರು. ಅವರು ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್ ಎಂಬವರು.</verse>
				<verse number="3">ಅಮ್ರಾಮನಿಗೆ ಆರೋನ್, ಮೋಶೆ ಎಂಬ ಗಂಡುಮಕ್ಕಳೂ ಮಿರ್ಯಾಮ್ ಎಂಬ ಹೆಣ್ಣುಮಗಳೂ ಇದ್ದರು.</verse>
				<verse number="4">ಆರೋನನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬ ನಾಲ್ಕು ಜನ ಮಕ್ಕಳಿದ್ದರು.</verse>
				<verse number="5">ಎಲ್ಲಾಜಾರ್ ನ ಸಂತತಿಯವರು ಇವರು: ಫೀನೆಹಾಸ, ಅಬೀಷೂವ, ಬುಕ್ಕೀಯ, ಉಜ್ಜೀಯ,</verse>
				<verse number="6">ಜೆರಹ್ಯ, ಮೆರಾಯೋತ,</verse>
				<verse number="7">ಅಮರ್ಯ, ಅಹೀಟೂಬ,</verse>
				<verse number="8">ಚಾದೋಕ, ಅಹೀಮಾಚ,</verse>
				<verse number="9">ಅಜರ್ಯ, ಯೋಹಾನಾನ.</verse>
				<verse number="10">ಜೆರುಸಲೇಮಿನಲ್ಲಿ ಅರಸ ಸೊಲೊಮೋನನು ಕಟ್ಟಿಸಿದ ದೇವಾಲಯದಲ್ಲಿ ಸೇವೆಮಾಡಿದವರು: ಅಜರ್ಯ,</verse>
				<verse number="11">ಅಮರ್ಯ, ಅಹೀಟೂಬ,</verse>
				<verse number="12">ಚಾದೋಕ, ಶಲ್ಲೂಮ,</verse>
				<verse number="13">ಹಿಲ್ಕೀಯ, ಅಜರ್ಯ,</verse>
				<verse number="14">ಸೆರಾಯ, ಯೆಹೋಚಾದಾಕ ಎಂಬವರು.</verse>
				<verse number="15">ಸರ್ವೇಶ್ವರ ಸೆರೆಗೆ ಕಳುಹಿಸಿದ ಜುದೇಯದ ಮತ್ತು ಜೆರುಸಲೇಮಿನ ಇತರ ಜನರೊಂದಿಗೆ ಅರಸ ನೆಬೂಕದ್ನೆಚ್ಚರನು ಯೆಹೋಚಾದಾಕನನ್ನು ಗಡೀಪಾರು ಮಾಡಿದನು.</verse>
				<verse number="16">ಲೇವಿಗೆ ಗೇರ್ಷೋಮ್, ಕೆಹಾತ್, ಮೆರಾರಿ ಎಂಬ ಮೂರು ಮಂದಿ ಮಕ್ಕಳಿದ್ದರು.</verse>
				<verse number="17">ಅವರಿಗೂ ಮಕ್ಕಳಿದ್ದರು. ಗೇರ್ಷೋಮನು ಲಿಬ್ನೀ ಮತ್ತು ಶಿಮ್ಮೀ ಎಂಬವರ ತಂದೆ.</verse>
				<verse number="18">ಕೆಹಾತನು ಅಮ್ರಾಮ್, ಇಚ್ಹಾರ್, ಹೆಬ್ರೋನ, ಉಜ್ಜೀಯೇಲ್ ಎಂಬವರ ತಂದೆ.</verse>
				<verse number="19">ಮೆರಾರಿಯು ಮಹ್ಲೀ, ಮುಷೀ ಎಂಬವರ ತಂದೆ.</verse>
				<verse number="20">ಗೇರ್ಷೋಮನ ಸಂತತಿಯವರು: ಲಿಬ್ನೀ, ಯಹತ್, ಚಿಮ್ಮ,</verse>
				<verse number="21">ಯೋವಾಹ, ಇದ್ದೋ, ಜೆರಹ ಮತ್ತು ಯೆವತ್ರೈ.</verse>
				<verse number="22">ಕೆಹಾತನ ಸಂತತಿಯವರು: ಅಮ್ಮೀನಾದಾಬ್, ಕೋರಹ, ಅಸ್ಸೀರ್,</verse>
				<verse number="23">ಎಲ್ಕಾನಾ, ಎಬ್ಯಾಸಾಫ್, ಅಸ್ಸೀರ್,</verse>
				<verse number="24">ತಹತ್, ಉರೀಯೇಲ್, ಉಜ್ಜೀಯ ಮತ್ತು ಸೌಲ್.</verse>
				<verse number="25">ಎಲ್ಕಾನನಿಗೆ ಇಬ್ಬರು ಮಕ್ಕಳಿದ್ದರು: ಅಮಾಸೈ, ಅಹೀಮೋತ್ ಎಂಬವರು.</verse>
				<verse number="26">ಅಹೀಮೋತ್‍ನ ವಂಶಜರು: ಎಲ್ಕಾನ, ಚೋಫೈ, ನಹತ್, ಎಲೀಯಾಬ್, ಯೆರೋಹಾಮ್, ಎಲ್ಕಾನ ಹಾಗು ಸಮುವೇಲ.</verse>
				<verse number="27"></verse>
				<verse number="28">ಸಮುವೇಲನಿಗೆ ಇಬ್ಬರು ಮಕ್ಕಳಿದ್ದರು: ಯೋವೇಲ್ ಹಿರಿಯನು, ಅಬೀಯ ಕಿರಿಯವನು.</verse>
				<verse number="29">ಮೆರಾರೀ ಸಂತತಿಯವರು: ಮಹ್ಲೀ, ಲಿಬ್ನೀ, ಶಿಮ್ಮೀ, ಉಜ್ಜಾ,</verse>
				<verse number="30">ಶಿಮ್ಮಾ, ಹಗ್ಗೀಯ ಮತ್ತು ಅಸಾಯ ಎಂಬವರು.</verse>
				<verse number="31">ಮಂಜೂಷವನ್ನು ಜೆರುಸಲೇಮಿಗೆ ತಂದ ತರುವಾಯ ಆರಾಧನಾವಿಧಿಗಾಗಿ ಅರಸ ದಾವೀದನು ಸಂಗೀತಮಂಡಲಿಯನ್ನು ನೇಮಿಸಿದನು.</verse>
				<verse number="32">ಅರಸ ಸೊಲೊಮೋನ ದೇವಾಲಯವನ್ನು ಕಟ್ಟಿಸುವುದಕ್ಕಿಂತ ಪೂರ್ವದಲ್ಲಿ ಅವರು ಸರ್ವೇಶ್ವರನ ದರ್ಶನದ ಡೇರೆಯ ಬಳಿಯಲ್ಲಿ ಕ್ರಮಪ್ರಕಾರ ಅನುದಿನವೂ ಕಾರ್ಯ ನಿರ್ವಹಿಸಿದರು.</verse>
				<verse number="33">ಹೀಗೆ ಕಾರ್ಯ ನಿರ್ವಹಿಸಿದವರ ಕುಟುಂಬಗಳ ಸರಣಿಯು ಇಂತಿದೆ: ಕೇಹತನ ಗೋತ್ರದವರು: ಪ್ರಥಮ ಸಂಗೀತಮಂಡಲಿಯ ನಾಯಕ ಯೋವೇಲನ ಮಗ ಹೇಮಾನ, ಇವನ ಹಿಂದಿನ ವಂಶಾವಳಿ ಯಕೋಬನವರೆಗೆ ಹೀಗಿದೆ: ಹೇಮಾನ, ಯೋವೇಲ, ಸಮುವೇಲ,</verse>
				<verse number="34">ಎಲ್ಕಾನ, ಯೆರೋಹಾಮ, ಎಲೀಯೇಲ, ತೋಹ,</verse>
				<verse number="35">ಚೂಫ, ಎಲ್ಕಾನ, ಮಹತ, ಅಮಾಸೈ,</verse>
				<verse number="36">ಎಲ್ಕಾನ, ಯೋವೇಲ, ಅಜರ್ಯ, ಚೆಫನ್ಯ,</verse>
				<verse number="37">ತಹತ, ಅಸೀರ, ಎಬ್ಯಾಸಾಫ, ಕೋರಹ,</verse>
				<verse number="38">ಇಚ್ಹಾರ, ಕೆಹಾತ ಲೇವಿ, ಯಕೋಬ (ಇಸ್ರಯೇಲ).</verse>
				<verse number="39">ಆಸಾಫನು ದ್ವಿತೀಯ ಸಂಗೀತಮಂಡಳಿಯ ನಾಯಕ. ಅವನ ಪೂರ್ವಜರ ವಂಶಾವಳಿ ಲೇವಿಯವರೆಗೆ ಹೀಗಿದೆ: ಆಸಾಫ, ಬೆರಕ್ಯ, ಶಿಮ್ಮ,</verse>
				<verse number="40">ಮೀಕಾಯೇಲ, ಬಾಸೇಯ, ಮಲ್ಕೀಯ,</verse>
				<verse number="41">ಎತ್ನಿ, ಜೆರಹ, ಅದಾಯ,</verse>
				<verse number="42">ಏತಾನ, ಜಿಮ್ಮ, ಶಿಮ್ಮೀ,</verse>
				<verse number="43">ಯಹತ, ಗೇರ್ಷೋಮ, ಲೇವಿ.</verse>
				<verse number="44">ಮೆರಾರೀ ಕುಟುಂಬದ ಏತಾನ ತೃತೀಯ ಸಂಗೀತಮಂಡಳಿಯ ನಾಯಕ. ಅವನ ಪೂರ್ವಜರ ವಂಶಾವಳಿ ಲೇವಿಯವರೆಗೆ ಹೀಗಿದೆ: ಏತಾನ, ಕೀಷೀ, ಅಬ್ದೀಯ, ಮಲ್ಲೂಕ,</verse>
				<verse number="45">ಹಷಬ್ಯ, ಅಮಚ್ಯ, ಹಿಲ್ಕೀಯ,</verse>
				<verse number="46">ಅಮ್ಜೀ, ಬಾನೀ, ಶೆಮೆರ,</verse>
				<verse number="47">ಮಹ್ಲೀ, ಮೂಷೀ, ಮೆರಾರಿ ಹಾಗು ಲೇವಿ.</verse>
				<verse number="48">ಅವರ ಸಹೋದರರಾದ ಇತರ ಲೇವಿಯರು ಆರಾಧನೆಯ ಸ್ಥಳದಲ್ಲಿ ಬೇರೆ ಕೆಲಸಗಳಿಗೆ ನೇಮಕವಾಗಿದ್ದರು.</verse>
				<verse number="49">ಆರೋನನೂ ಅವನ ವಂಶಜರೂ ಸುಗಂಧ ಕಾಣಿಕೆಗಳನ್ನು ಅರ್ಪಿಸುತ್ತಿದ್ದರು. ಬಲಿಪೀಠದ ಮೇಲೆ ಸಮರ್ಪಿಸುವ ಬಲಿಗಳನ್ನು ಅರ್ಪಣೆಮಾಡುತ್ತಿದ್ದರು. ಅತೀ ಪರಿಶುದ್ಧ ಸ್ಥಳದ ಎಲ್ಲ ಆರಾಧನೆಗೂ ಇಸ್ರಯೇಲರ ಕ್ಷಮಾಪಣೆಗಾಗಿ ಸರ್ವೇಶ್ವರ ನೇಮಿಸಿದ ಬಲಿಯರ್ಪಣೆಗಳಿಗೂ ಧೂಪಾರತಿಗೂ ಅವರೇ ಜವಾಬ್ದಾರರು ಆಗಿದ್ದರು. ದೇವರ ಸೇವಕ ಮೋಶೆ ಕೊಟ್ಟ ನಿಯಮಗಳಿಗೆ ಅನುಸಾರವಾಗಿ ಇದೆಲ್ಲವನ್ನೂ ಅವರು ಮಾಡುತ್ತಿದ್ದರು.</verse>
				<verse number="50">ಆರೋನನ ವಂಶಜರು: ಎಲ್ಲಾಜಾರ್, ಫೀನೆಹಾಸ್, ಅಬೀಷೂವ,</verse>
				<verse number="51">ಬುಕ್ಕೀ, ಉಜ್ಜೀ, ಜೆರಹ್ಯಾಹ,</verse>
				<verse number="52">ಮೆರಾಯೋತ್, ಅಮರ್ಯ, ಅಹೀಟೂಬ್,</verse>
				<verse number="53">ಚಾದೋಕ್ ಮತ್ತು ಅಹಿಮಾಚ್.</verse>
				<verse number="54">ಕೆಹಾತನ ಗೋತ್ರದ ಆರೋನನ ವಂಶಜರಿಗೆ ನೇಮಕವಾದ ಪ್ರಾಂತ್ಯ ಇದು: ಲೇವಿಯರಿಗೆಂದು ಪ್ರತ್ಯೇಕಿಸಿದ ಪ್ರದೇಶದ ಪ್ರಥಮ ಪಾಲನ್ನು ಅವರು ಪಡೆದುಕೊಂಡರು.</verse>
				<verse number="55">ಇದು ಯೆಹೂದ ಸೀಮೆಯ ಹೆಬ್ರೋನನ್ನೂ ಅದರ ಸುತ್ತಲಿನ ಪ್ರದೇಶಗಳನ್ನೂ ಒಳಗೊಂಡಿತ್ತು.</verse>
				<verse number="56">ಪಟ್ಟಣಕ್ಕೆ ಒಳಪಟ್ಟ ಗದ್ದೆಗಳೂ ಗ್ರಾಮಗಳೂ ಯೆಫುನ್ನೆಯ ಮಗ ಕಾಲೇಬನಿಗೆ ಕೊಡಲಾಗಿದ್ದವು.</verse>
				<verse number="57">ಆರೋನನ ಸಂತತಿಯವರಿಗೆ ಕೊಡಲಾದ ಪಟ್ಟಣಗಳು: ಆಶ್ರಯ ನಗರವಾದ ಹೆಬ್ರೋನ್, ಯತ್ತೀರ್ ಹಾಗು ಲಿಬ್ನದ ಪಟ್ಟಣಗಳು, ಎಷ್ಟೆಮೋವ, ಹೀಲೇನ್, ದೆಬೀರ್, ಆಷಾನ್, ಬೇತ್ಷೆಮೆಷ್ ಮತ್ತು ಅವುಗಳ ಫಲವತ್ತಾದ ಪ್ರದೇಶಗಳು.</verse>
				<verse number="58"></verse>
				<verse number="59"></verse>
				<verse number="60">ಬೆನ್ಯಾಮೀನ್ಯರ ಪ್ರದೇಶದಲ್ಲಿ ಫಲವತ್ತಾದ ಪ್ರದೇಶಗಳನ್ನು ಒಳಗೊಂಡ ಪಟ್ಟಣಗಳು ಅಂದರೆ ಗೆಬ, ಅಲೆಮೆತ್, ಅನಾತೋತ್ ಈ ಪಟ್ಟಣಗಳನ್ನು ಅವರಿಗೆ ಕೊಡಲಾಗಿತ್ತು. ಅವರೆಲ್ಲರ ಕುಟುಂಬಗಳ ವಾಸಕ್ಕಾಗಿ ಒಟ್ಟು ಹದಿಮೂರು ಪಟ್ಟಣಗಳು ದೊರೆತವು.</verse>
				<verse number="61">ಪಶ್ಚಿಮದಲ್ಲಿ ಮನಸ್ಸೆ ಪ್ರದೇಶದಲ್ಲಿದ್ದ ಹತ್ತು ಪಟ್ಟಣಗಳು ಕೇಹಾತನ ಗೋತ್ರದಲ್ಲಿದ್ದ ಉಳಿದವರಿಗೆ ಕುಟುಂಬ ಕುಟುಂಬವಾಗಿ ಚೀಟುಹಾಕಿ ಕೊಡಲಾಯಿತು.</verse>
				<verse number="62">ಇಸ್ಸಾಕಾರ್, ಆಶೇರ್, ನಫ್ತಾಲಿ ಹಾಗು ಬಾಷಾನಿನ ಪೂರ್ವಮನಸ್ಸೆ ಈ ಪ್ರದೇಶಗಳಲ್ಲಿ ಇದ್ದ ಹದಿಮೂರು ನಗರಗಳನ್ನು ಕುಟುಂಬಗಳಿಗೆ ಅನುಗುಣವಾಗಿ ಗೇರ್ಷೋಮನ ಗೋತ್ರಕ್ಕೆ ಕೊಡಲಾಯಿತು.</verse>
				<verse number="63">ಇದೇ ರೀತಿಯಲ್ಲಿ ರೂಬೇನ್, ಗಾದ್, ಜೆಬುಲೂನರ ಪ್ರದೇಶಗಳಲ್ಲಿದ್ದ ಹನ್ನೆರಡು ಪಟ್ಟಣಗಳನ್ನು ಕುಟುಂಬಗಳಿಗನುಸಾರವಾಗಿ ಮೆರಾರಿಯ ಗೋತ್ರಕ್ಕೆ ಮಂಜೂರು ಮಾಡಲಾಯಿತು.</verse>
				<verse number="64">ಹೀಗೆಯೇ ಇಸ್ರಯೇಲರು ಲೇವಿಯರ ವಾಸಕ್ಕಾಗಿ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿನ ಫಲವತ್ತಾದ ಭೂಮಿಗಳನ್ನೂ ಕೊಟ್ಟರು.</verse>
				<verse number="65">ಮೇಲೆ ನಮೂದಿಸಿದ ಯೆಹೂದ, ಸಿಮೆಯೋನ್, ಬೆನ್ಯಾಮೀನ್ಯರ ಪ್ರದೇಶಗಳಲ್ಲಿದ್ದ ಪಟ್ಟಣಗಳನ್ನೂ ಸಹ ಚೀಟುಹಾಕುವುದರ ಮೂಲಕ ಹಂಚಲಾಯಿತು.</verse>
				<verse number="66">ಕೇಹಾತನ ಗೋತ್ರದ ಕೆಲವು ಕುಟುಂಬಗಳಿಗೆ ಎಫ್ರಯಿಮ್ ಪ್ರದೇಶದಲ್ಲಿದ್ದ ಪಟ್ಟಣಗಳನ್ನು ಕೊಡಲಾಯಿತು.</verse>
				<verse number="67">ಎಫ್ರಯಿಮ್ ಬೆಟ್ಟದಲ್ಲಿಯ ಆಶ್ರಯ ನಗರವಾದ ಶೆಕೆಮ್,</verse>
				<verse number="68">ಗೆಜೆರ್, ಯೊಕ್ಮೆಯಾಮ್,</verse>
				<verse number="69">ಬೇತ್ ಹೋರೋನ್, ಅಯ್ಯಾಲೋನ್, ಗತ್ರಿಮ್ಮೋನ್,</verse>
				<verse number="70">ಪೂರ್ವದ ಮನಸ್ಸೆ ಪ್ರದೇಶದ ಆನೇರ್, ಬಿಳ್ಳಾಮ್ ಪಟ್ಟಣಗಳು ಅವುಗಳ ಸುತ್ತಲಿನ ಫಲವತ್ತಾದ ಪ್ರದೇಶಗಳನ್ನು ಅವರಿಗಾಗಿ ಪ್ರತ್ಯೇಕಿಸಲಾಯಿತು.</verse>
				<verse number="71">ಗೇರ್ಷೋಮ ಗೋತ್ರದ ಕುಟುಂಬಗಳಿಗೆ ಫಲವತ್ತಾದ ಪ್ರದೇಶಗಳೊಂದಿಗೆ ಕೊಡಲಾದ ಪಟ್ಟಣಗಳು: ಪಶ್ಚಿಮ ಮನಸ್ಸೆ ಪ್ರದೇಶದಲ್ಲಿದ್ದ ಬಾಷಾನಿನ ಗೋಲಾನ್ ಮತ್ತು ಅಷ್ಟಾರೋಟ್;</verse>
				<verse number="72">ಇಸ್ಸಾಕಾರನ ಪ್ರದೇಶದಲ್ಲಿದ್ದ ಕೆದೆಷ್, ದಾಬೆರತ್, ರಾಮೋತ್,</verse>
				<verse number="73">ಆನೇಮ್,</verse>
				<verse number="74">ಆಶೇರನ ಪ್ರದೇಶದಲ್ಲಿದ್ದ ಮಾಷಾಲ್, ಅಬ್ದೋನ್,</verse>
				<verse number="75">ಹುಕೋಕ್, ರೆಹೋಬ್,</verse>
				<verse number="76">ನಫ್ತಾಲಿ ಪ್ರದೇಶದಲ್ಲಿದ್ದ ಗಲಿಲಾಯದ ಕೆದೆಷ್, ಹಮ್ಮೋನ್ ಮತ್ತು ಕಿರ್ಯಾತಯಿಮ್.</verse>
				<verse number="77">ಮೆರಾರಿ ಗೋತ್ರದ ಮಿಕ್ಕ ಕುಟುಂಬಗಳಿಗೆ ಫಲವತ್ತಾದ ಹೊಲಗದ್ದೆಗಳೊಂದಿಗೆ ಒದಗಿಸಲಾದ ನಗರಗಳು: ಜೆಬುಲೂನ್ ಪ್ರದೇಶದ ರಿಮ್ಮೋನೋ, ಹಾಗು ತಾಬೋರ್.</verse>
				<verse number="78">ರೂಬೇನ್ ಪ್ರದೇಶದಲ್ಲಿದ್ದ ಜೋರ್ಡನ್ ನದಿಯ ಪೂರ್ವದಲ್ಲಿ ಜೆರಿಕೋವನ್ನು ದಾಟಿ, ತಪ್ಪಲು ಪ್ರದೇಶದಲ್ಲಿಯ ಬೆಚೆರ್, ಯಹಚ,</verse>
				<verse number="79">ಕೆದೇಮೋತ್ ಮತ್ತು ಮೇಫಾತ್.</verse>
				<verse number="80">ಗಾದನ ಪ್ರದೇಶದಲ್ಲಿ ಗಿಲ್ಯಾದಿನ, ರಾಮೋತ್, ಮಹನಯಿಮ್,</verse>
				<verse number="81">ಹೆಷ್ಬೋನ್ ಹಾಗು ಯಗ್ಜೇರ್.</verse>
			</chapter>
			<chapter number="7">
				<verse number="1">ಇಸ್ಸಾಕಾರನಿಗೆ ತೋಲ, ಪೂವ, ಯಾಶೂಬ್, ಶಿಮ್ರೋನ್ ಎಂಬ ನಾಲ್ವರು ಮಕ್ಕಳಿದ್ದರು.</verse>
				<verse number="2">ತೋಲನಿಗೆ ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್, ಸಮುವೇಲ್ ಎಂಬ ಆರು ಜನ ಮಕ್ಕಳಿದ್ದರು. ಇವರು ತೋಲ ಗೋತ್ರದ ಕುಟುಂಬಗಳ ಮುಖ್ಯಸ್ಥರೂ ಪ್ರಸಿದ್ಧ ವೀರರೂ ಆಗಿದ್ದರು. ಅರಸ ದಾವೀದನ ಕಾಲದಲ್ಲಿ ಅವರ ವಂಶಜರ ಸಂಖ್ಯೆ - 22,600:</verse>
				<verse number="3">ಉಜ್ಜೀ ಎಂಬವನಿಗೆ ಇಜ್ಯಹ್ಯಾಹ ಎಂಬ ಮಗನಿದ್ದನು. ಇವನೂ ಇವನ ನಾಲ್ವರು ಮಕ್ಕಳಾದ ಮೀಕಾಯೇಲ್, ಓಬದ್ಯ, ಯೋವೇಲ್, ಇಷ್ಷೀಯ ಎಂಬವರು ಕುಟುಂಬಗಳ ಮುಖ್ಯಸ್ಥರಾಗಿದ್ದರು.</verse>
				<verse number="4">ಇವರಿಗೆ ಅನೇಕ ಪತ್ನಿಯರೂ ಮಕ್ಕಳೂ ಇದ್ದು ಅವರ ವಂಶಜರಲ್ಲಿ -36,000 ಪುರುಷರನ್ನು ಸೈನ್ಯದಲ್ಲಿ ಸೇವೆಮಾಡಲು ಒದಗಿಸಿಕೊಟ್ಟರು.</verse>
				<verse number="5">ಇಸ್ಸಾಕಾರನ ಗೋತ್ರದ ಎಲ್ಲಾ ಕುಟುಂಬಗಳ ಅಧಿಕೃತ ದಾಖಲೆಗಳು - 8,000 ಪುರುಷರು ಸೈನ್ಯದಲ್ಲಿರಲು ಯೋಗ್ಯರಾಗಿದ್ದರೆಂದು ಪಟ್ಟಿಮಾಡಿರುತ್ತವೆ.</verse>
				<verse number="6">ಬೆನ್ಯಾಮೀನನಿಗೆ ಮೂವರು ಮಕ್ಕಳು: ಬೆಳ, ಬೆಕೆರ್, ಯದೀಯಯೇಲ್ ಎಂಬವರು.</verse>
				<verse number="7">ಬೆಳನಿಗೆ ಐದು ಜನ ಮಕ್ಕಳು: ಎಚ್ಚೋನ್, ಉಜ್ಜೀ, ಉಜ್ಜೀಯೇಲ್, ಯೆರೀಮೋತ್ ಮತ್ತು ಈರೀ ಎಂಬವರು. ಇವರು ಗೋತ್ರದ ಕುಟುಂಬಗಳ ಮುಖ್ಯಸ್ಥರೂ ಪ್ರಸಿದ್ಧ ಯುದ್ಧವೀರರೂ ಆಗಿದ್ದರು. ಇವರ ವಂಶಜರಲ್ಲಿ 22,034 ಜನರು ಸೈನ್ಯದಲ್ಲಿ ಕೆಲಸಮಾಡಲು ಯೋಗ್ಯರಾಗಿದ್ದರು.</verse>
				<verse number="8">ಬೆಕೆರನಿಗೆ ಒಂಬತ್ತು ಜನ ಮಕ್ಕಳು: ಜೆಮೀರ, ಯೋವಾಷ್, ಎಲೀಯೆಜೆರ್, ಎಲ್ಕೋವೇನೈ, ಒಮ್ರಿ, ಯೆರೀಮೋತ್, ಅಬೀಯ, ಅನಾತೋತ್, ಆಲಿಮೆತ್ ಎಂಬವರೇ.</verse>
				<verse number="9">ಕುಟುಂಬಗಳಿಗನುಗುಣವಾದ ಅಧಿಕೃತ ದಾಖಲೆ - 20,200 ಪುರುಷರು ಅವರ ವಂಶಜರಲ್ಲಿ ಸೈನ್ಯ ಸೇರಲು ಅರ್ಹರಾಗಿದ್ದರೆಂದು ಪಟ್ಟಿಮಾಡಿದೆ.</verse>
				<verse number="10">ಯದೀಯಯೇಲನಿಗೆ ಬಿಲ್ಹಾನ್ ಎಂಬ ಮಗನಿದ್ದ. ಬಿಲ್ಹಾನ್‍ಗೆ ಏಳು ಜನ ಮಕ್ಕಳು: ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ, ಜೇತಾನ್, ತಾರ್ಷೀಷ್, ಅಹೀಷೆಹರ್ ಎಂಬವರು.</verse>
				<verse number="11">ಅವರೆಲ್ಲರೂ ತಮ್ಮ ಗೋತ್ರದ ಕುಟುಂಬಗಳ ಮುಖ್ಯಸ್ಥರೂ ಪ್ರಸಿದ್ಧ ಯುದ್ಧವೀರರೂ ಆಗಿದ್ದರು. ಅವರ ವಂಶಜರಲ್ಲಿ 17,200 ಜನರು ಸೈನ್ಯದಲ್ಲಿರಲು ಅರ್ಹತೆ ಪಡೆದಿದ್ದರು.</verse>
				<verse number="12">ಶುಪ್ಪೀಮ್ ಮತ್ತು ಹುಪ್ಪೀಮ್ ಎಂಬವರೂ ಸಹ ಇದೇ ಗೋತ್ರಕ್ಕೆ ಸೇರಿದವರು. ದಾನ್ ಗೆ ಹುಶೀಮ ಎಂಬ ಮಗನಿದ್ದನು.</verse>
				<verse number="13">ನಫ್ತಾಲಿಗೆ ನಾಲ್ಕು ಜನ ಮಕ್ಕಳು: ಯಹಚಿಯೇಲ್, ಗೂನೀ, ಯೆಚೇರ್, ಶಲ್ಲೂಮ್ ಎಂಬವರು. ಇವರು ಬಿಲ್ಹಳ ಸಂತಾನದವರು.</verse>
				<verse number="14">ಅರಾಮ್ಯ ಉಪಪತ್ನಿಯಿಂದ ಮನಸ್ಸೆಗೆ ಅಷ್ರಿಯೇಲ್, ಮಾಕೀರ ಎಂಬಿಬ್ಬರು ಮಕ್ಕಳಿದ್ದರು. ಮಾಕೀರ ಗಿಲ್ಯಾದನ ತಂದೆ.</verse>
				<verse number="15">ಮಾಕೀರನು ಹುಪ್ಪೀಮ್ ಮತ್ತು ಶುಪ್ಪೀಮರ ಸೋದರಿಯಾದ ಮಾಕಳನ್ನು ಮದುವೆಯಾದನು. ಚೆಲೋಫಾದ್ ಮಾಕೀರನ ದ್ವಿತೀಯ ಪುತ್ರ. ಅವನಿಗೆ ಕೇವಲ ಹೆಣ್ಣುಮಕ್ಕಳೇ ಇದ್ದರು.</verse>
				<verse number="16">ಮಾಕೀರನ ಹೆಂಡತಿ ಮಾಕ ಇಬ್ಬರು ಮಕ್ಕಳಿಗೆ ಜನ್ಮವಿತ್ತಳು. ಅವರಿಗೆ ಪೆರೆಷ್ ಮತ್ತು ಶೆರೆಷ್ ಎಂದು ಹೆಸರಿಟ್ಟನು. ಪೆರೆಷನಿಗೆ ಊಲಾಮ್, ರೆಕೆಮ್ ಎಂಬಿಬ್ಬರು ಮಕ್ಕಳು.</verse>
				<verse number="17">ಉಲಾಮ್‍ಗೆ ಬಿದಾನ್ ಎಂಬ ಒಬ್ಬ ಮಗನಿದ್ದ. ಇವರೆಲ್ಲರೂ ಮಾಕೀರನ ಮಗನೂ ಮನಸ್ಸೆಯ ಮೊಮ್ಮಗನೂ ಆದ ಗಿಲ್ಯಾದನ ವಂಶಜರು.</verse>
				<verse number="18">ಗಿಲ್ಯಾದನ ತಂಗಿ ಹಮ್ಮೋಲೆಕೆತಳು ಈಷ್ಹೋದ್, ಅಬೀಯೆಜೆರ್, ಮಹ್ಲ ಎಂಬ ಮೂರು ಮಕ್ಕಳಿಗೆ ಜನ್ಮವಿತ್ತಳು.</verse>
				<verse number="19">ಶೆಮೀದನ ಮಕ್ಕಳು: ಅಹ್ಯಾನ್, ಶೆಕೆಮ್, ಲಿಕ್ಹೀ, ಅನೀಯಾಮ್ ಎಂಬವರು.</verse>
				<verse number="20">ಎಫ್ರಯಿಮನ ಸಂತಾನದವರು: ಶೂತೆಲಹ, ಬೆರೆದ್, ತಹತ್, ಎಲ್ಲಾದ, ತಹತ್,</verse>
				<verse number="21">ಜಾಬಾದ್, ಶೂತೆಲಹ ಎಂಬವರು. ಶೂತೆಲಹನಲ್ಲದೆ ಎಫ್ರಯಿಮನಿಗೆ ಎಜೆರ್, ಎಲ್ಲಾದ್ ಎಂಬಿಬ್ಬರು ಮಕ್ಕಳಿದ್ದರು. ಇವರು ಗತ್‍ನ ಮೂಲನಿವಾಸಿಗಳ ದನಗಳನ್ನು ಕದಿಯಲು ಪ್ರಯತ್ನಿಸಿದಾಗ ಕೊಲೆಗೀಡಾದರು.</verse>
				<verse number="22">ಇವರ ತಂದೆ ಎಫ್ರಯಿಮ್ ಅನೇಕ ದಿನಗಳವರೆಗೆ ಇವರಿಗಾಗಿ ಶೋಕಿಸಿದನು. ಅವನ ಸಹೋದರರು ಬಂದು ಅವನಿಗೆ ಸಂತಾಪ ಸೂಚಿಸಿದರು.</verse>
				<verse number="23">ಅನಂತರ ಅವನು ತನ್ನ ಹೆಂಡತಿಯನ್ನು ಸಂಗಮಿಸಲು ಆಕೆ ಗರ್ಭಧರಿಸಿ ಗಂಡು ಮಗುವಿಗೆ ಜನ್ಮವಿತ್ತಳು. ತಮ್ಮ ಕುಟುಂಬಕ್ಕೆ ಬಂದಿದ್ದ ಕಂಟಕದ ಜ್ಞಾಪಕಾರ್ಥವಾಗಿ ಅವನಿಗೆ ಬೆರೀಯ ಎಂದು ಹೆಸರಿಟ್ಟರು.</verse>
				<verse number="24">ಎಫ್ರಯಿಮನಿಗೆ ಶೇರ ಎಂಬ ಮಗಳು ಇದ್ದಳು. ಈಕೆ ಮೇಲಿನ ಹಾಗು ಕೆಳಗಿನ ಬೇತ್ ಹೋರೋನ್ ಪಟ್ಟಣಗಳನ್ನೂ ಉಜ್ಜೇನ್ ಶೇರ ಎಂಬ ಪಟ್ಟಣವನ್ನೂ ಕಟ್ಟಿಸಿದಳು.</verse>
				<verse number="25">ಎಫ್ರಯಿಮನಿಗೆ ರೆಫಹ ಎಂಬ ಇನ್ನೊಬ್ಬ ಮಗನಿದ್ದನು. ಅವನ ವಂಶಜರು: ರೆಷೆಫ್, ತೆಲಹ, ತಹನ್, ಲದ್ದಾನ್,</verse>
				<verse number="26">ಅಮ್ಮೀಹೂದ್, ಎಲೀಷಾಮ,</verse>
				<verse number="27">ನೋನ್, ಯೆಹೋಷುವ ಎಂಬವರೇ.</verse>
				<verse number="28">ಅವರು ವಶಪಡಿಸಿಕೊಂಡು ವಾಸಿಸಿದ ಪ್ರದೇಶ ಬೇತೇಲ್ ಹಾಗು ಅದರ ಸುತ್ತಮುತ್ತಲಿನ ಪ್ರದೇಶಗಳನ್ನೂ ಪೂರ್ವದಲ್ಲಿ ನಾರಾನ್ ವರೆಗೆ ಪಶ್ಚಿಮದಲ್ಲಿ ಗೆಜೆರದವರೆಗೆ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಗಳನ್ನೂ ಒಳಗೊಂಡಿತ್ತು. ಶೆಕೆಮ್, ಅಯ್ಯಾ ಪಟ್ಟಣಗಳೂ ಅವುಗಳ ಗ್ರಾಮಗಳೂ ಅದರಲ್ಲಿ ಸೇರಿದ್ದವು.</verse>
				<verse number="29">ಮನಸ್ಸೆಯ ಸಂತಾನದವರು ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಎಂಬ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿನ ಗ್ರಾಮಗಳನ್ನೂ ತಮ್ಮ ವಶದಲ್ಲಿಟ್ಟುಕೊಂಡಿದ್ದರು. ಯಕೋಬನ ಮಗ ಜೋಸೆಫನ ಸಂತತಿಯವರು ಈ ಎಲ್ಲಾ ಪ್ರದೇಶಗಳಲ್ಲಿ ವಾಸಿಸಿದರು.</verse>
				<verse number="30">ಆಶೇರನ ಸಂತಾನದವರು: ಇಮ್ನ, ಇಷ್ವ, ಇಷ್ವೀ, ಬೆರೀಯ ಎಂಬವರು. ಇವರ ತಂಗಿ ಸೆರಹ.</verse>
				<verse number="31">ಬೆರೀಯನ ಮಕ್ಕಳು - ಹೆಬೆರ್, ಬಿರ್ಜೈತ್ ಊರಿನ ಸ್ಥಾಪಕನಾದ ಮಲ್ಕೀಯೇಲ್ ಎಂಬವರು.</verse>
				<verse number="32">ಹೆಬೆರನ ಮಕ್ಕಳು - ಯಫ್ಲೇಟ್, ಶೋಮೇರ್, ಹೋತಾಮ್ ಹಾಗು ಇವರ ತಂಗಿ ಶೂವ.</verse>
				<verse number="33">ಯಫ್ಲೇಟನ ಮಕ್ಕಳು - ಪಾಸಕ್, ಬಿಮ್ಹಾಲ್, ಅಶ್ವಾತ್ ಎಂಬವರು.</verse>
				<verse number="34">ಶೆಮೆರನ ಮಕ್ಕಳು - ಅಹೀರೊಹ್ಗ, ಹುಬ್ಬ ಮತ್ತು ಅರಾಮ್.</verse>
				<verse number="35">ಇವನ ತಮ್ಮ ಹೆಲೆಮನ ಮಕ್ಕಳು - ಜೋಫಹ, ಇಮ್ನ, ಶೇಲಿಷ್ ಮತ್ತು ಅಮಾಲ್.</verse>
				<verse number="36">ಜೋಫಹನ ಮಕ್ಕಳು - ಸೂಹ, ಹರ್ನೆಫೆರ್, ಶೂಗಾಲ್, ಬೇರೀ,</verse>
				<verse number="37">ಇಮ್ರ, ಬೆಚೆರ್, ಹೋದ್, ಶಮ್ಮ, ಶಿಲ್ಷ, ಇತ್ರಾನ್ ಹಾಗೂ ಬೇರ.</verse>
				<verse number="38">ಯೆತೆರನ ಮಕ್ಕಳು - ಯೆಫುನ್ನೆ, ಪಿಸ್ಪ ಹಾಗೂ ಅರಾ.</verse>
				<verse number="39">ಉಲ್ಲನ ಮಕ್ಕಳು - ಆರಹ, ಹನ್ನೀಯೇಲ್, ರಿಚ್ಯ ಎಂಬವರು.</verse>
				<verse number="40">ಇವರೆಲ್ಲರೂ ಆಶೇರನ ವಂಶಜರು. ಇವರು ಕುಟುಂಬಗಳ ಮುಖ್ಯಸ್ಥರೂ ಯುದ್ಧವೀರರೂ ಶ್ರೇಷ್ಠನಾಯಕರೂ ಆಗಿದ್ದರು. ಆಶೇರನ ವಂಶಜರಲ್ಲಿ - 26,000 ಪುರುಷರು ಸೈನ್ಯದಲ್ಲಿ ಇರಲು ಅರ್ಹತೆ ಪಡೆದಿದ್ದರು.</verse>
			</chapter>
			<chapter number="8">
				<verse number="1">ಬೆನ್ಯಾಮೀನನಿಗೆ ಐದು ಜನ ಮಕ್ಕಳಿದ್ದರು. ವಯಸ್ಸಿಗನುಗುಣವಾಗಿ ಅವರ ಹೆಸರುಗಳು ಇಂತಿವೆ - ಬೆಳ, ಅಷ್ಬೇಲ್, ಅಹ್ರಹ,</verse>
				<verse number="2">ನೋಹ ಮತ್ತು ರಾಫ.</verse>
				<verse number="3">ಬೆಳನ ಮಕ್ಕಳು - ಅದ್ದಾರ್, ಗೇರ, ಅಬೀಹೂದ್,</verse>
				<verse number="4">ಅಬೀಷೂವ, ನಾಮಾನ್, ಅಹೋಹ,</verse>
				<verse number="5">ಗೇರ, ಶೆಪೂಫಾನ್, ಹೂರಾಮ್ ಎಂಬವರು.</verse>
				<verse number="6">ಏಹೂದನ ಸಂತಾನದವರು - ನಾಮಾನ್, ಅಹೀಯ, ಗೇರ ಎಂಬವರು. ಅವರು ಗೇಬದಲ್ಲಿ ವಾಸಿಸಿದ ಕುಟುಂಬಗಳ ಮುಖ್ಯಸ್ಥರು. ಆದರೆ ಅವರು ಹೊರಗೆ ಹೋಗುವಂತೆ ಒತ್ತಾಯಿಸಲ್ಪಟ್ಟಾಗ ಮಾನಹತಿಯಲ್ಲಿ ವಾಸಿಸಲು ಹೋದರು. ಹೀಗೆ ಹೊರಡುವಾಗ ಉಚ್ಚ ಮತ್ತು ಅಹೀಹೂದನ ತಂದೆ ಗೇರ ಮುಂದಾಳಾಗಿದ್ದರು.</verse>
				<verse number="7"></verse>
				<verse number="8">ಶಹರಯಿಮನು ತನ್ನ ಇಬ್ಬರು ಪತ್ನಿಯರಾದ ಹೂಷೀಮ್ ಮತ್ತು ಬಾರ ಎಂಬವರಿಂದ ವಿವಾಹ ವಿಚ್ಛೇದನ ಮಾಡಿಕೊಂಡನು. ಅನಂತರ ಮೋವಾಬ್ ದೇಶದಲ್ಲಿ ವಾಸಿಸಿದನು. ಅಲ್ಲಿ ಹೋದೆಷ್ ಎಂಬಾಕೆಯನ್ನು ವಿವಾಹವಾಗಿ ಏಳು ಜನ ಮಕ್ಕಳನ್ನು ಪಡೆದನು - ಯೋವಾಬ್, ಚಿಬ್ಯ, ಮೇಷ, ಮಲ್ಕಾಮ್, ಯೆಯೂಚ್, ಸಾಕ್ಯ, ಮಿರ್ಮ ಎಂದು ಅವರ ಹೆಸರು.</verse>
				<verse number="9"></verse>
				<verse number="10">ಅವನ ಎಲ್ಲಾ ಮಕ್ಕಳು ಗೋತ್ರಪ್ರಧಾನರು.</verse>
				<verse number="11">ಹುಷೀಮ್ ಎಂಬುವಳಿಂದ ಅವನಿಗೆ ಅಬೀಟೂಬ್, ಎಲ್ಪಾಲ ಎಂಬಿಬ್ಬರು ಮಕ್ಕಳು ಜನಿಸಿದರು.</verse>
				<verse number="12">ಎಲ್ಪಾಲನಿಗೆ ಮೂರು ಜನ ಮಕ್ಕಳು - ಏಬೆರ್, ಮಿಷ್ಷಾಮ್, ಶೆಮೆದ್ ಎಂಬವರು. ಓನೋ, ಲೋದ್ ಎಂಬ ಪಟ್ಟಣಗಳನ್ನು ಅವುಗಳ ಸುತ್ತುಮುತ್ತಲಿನ ಗ್ರಾಮಗಳನ್ನೂ ಕಟ್ಟಿಸಿದವನು ಶೆಮೆದ್.</verse>
				<verse number="13">ಗತ್ ಪಟ್ಟಣದ ಜನರನ್ನು ಹೊಡೆದೋಡಿಸಿ ಅಲ್ಲಿ ನೆಲೆಸಿದ ಹಾಗು ಅಯ್ಯಾಲೋನ್ ಪಟ್ಟಣದಲ್ಲಿ ವಾಸಿಸಿದ ಕುಟುಂಬಗಳ ಮುಖ್ಯಸ್ಥರು - ಬೆರೀಯ ಮತ್ತು ಶಮ ಎಂಬವರು.</verse>
				<verse number="14">ಬೆರೀಯನ ವಂಶಜರಲ್ಲಿ ಅಹ್ಯೋ, ಶಾಷಕ್, ಯೆರೇಮೋತ್,</verse>
				<verse number="15">ಜೆಬದ್ಯ, ಅರಾದ್, ಎದೆರ್,</verse>
				<verse number="16">ಮೀಕಾಯೇಲ್, ಇಷ್ಪ, ಯೋಹ ಎಂಬವರೂ ಸೇರಿದ್ದರು.</verse>
				<verse number="17">ಎಲ್ಪಾಲನ ಮಕ್ಕಳು - ಜೆಬದ್ಯ, ಮೆಷುಲ್ಲಾಮ್, ಹಿಜ್ಕೇ, ಹೆಬೆರ್,</verse>
				<verse number="18">ಇಷ್ಮೆರೈ, ಇಜ್ಲೀಯ ಹಾಗೂ ಯೋಬಾಬ್ ಎಂಬವರು.</verse>
				<verse number="19">ಶಿಮ್ಮೀಯ ಮಕ್ಕಳು - ಯಾಕೀಮ್, ಜಿಕ್ರೀ, ಜಬ್ದೀ,</verse>
				<verse number="20">ಎಲೀಗೇನೈ, ಚಿಲ್ಲೆತೈ, ಎಲೀಯೇಲ್,</verse>
				<verse number="21">ಅದಾಯ, ಬೆರಾಯ ಮತ್ತು ಶಿಮ್ರಾತ್ ಎಂಬವರು.</verse>
				<verse number="22">ಶಾಷಕನ ಮಕ್ಕಳು - ಇಷ್ಪಾನ್, ಏಬೆರ್, ಎಲೀಯೇಲ್,</verse>
				<verse number="23">ಅಬ್ದೋನ್, ಜಿಕ್ರಿ, ಹನಾನ್,</verse>
				<verse number="24">ಹನನ್ಯ, ಏಲಾಮ್, ಅನೆತೋತೀಯ,</verse>
				<verse number="25">ಇಫ್ದೆಯಾಹ, ಪೆನೂವೇಲ್ ಎಂಬವರು.</verse>
				<verse number="26">ಯೆರೋಹಾಮನ ಮಕ್ಕಳು - ಶಂಷೆರೈ, ಶೆಹರ್ಯ, ಅತಲ್ಯ,</verse>
				<verse number="27">ಯಾರೆಷ್ಯ, ಏಲೀಯ ಹಾಗೂ ಜಿಕ್ರೀ ಎಂಬವರು.</verse>
				<verse number="28">ಇವರು ಜೆರುಸಲೇಮಿನಲ್ಲಿ ನೆಲೆಸಿದ ಪುರಾತನ ಕುಟುಂಬಗಳ ಮುಖ್ಯಸ್ಥರೂ ಅವರ ಪ್ರಮುಖ ವಂಶಜರೂ ಆಗಿದ್ದಾರೆ.</verse>
				<verse number="29">ಯೆಗೂವೇಲ, ಗಿಬ್ಯೋನ ಪಟ್ಟಣವನ್ನು ಕಟ್ಟಿಸಿ ಅಲ್ಲಿ ನೆಲೆಸಿದನು. ಅವನ ಹೆಂಡತಿ ಮಾಕ ಎಂಬುವಳು.</verse>
				<verse number="30">ಅಬ್ದೋನ ಅವನ ಹಿರಿಯ ಮಗ. ಚೂರ್, ಕೀಷ್, ಬಾಳ್, ನಾದಾಬ್,</verse>
				<verse number="31">ಗೆದೋರ್, ಅಹ್ಯೋ, ಜೆಕೆರ್,</verse>
				<verse number="32">ಮತ್ತು ಶಿಮ್ಮೀಯ ತಂದೆ ಮಿಕ್ಲೋತ್ ಎಂಬವರು ಅವನ ಇತರ ಮಕ್ಕಳು. ಅವರ ವಂಶಜರು ಜೆರುಸಲೇಮಿನಲ್ಲಿ ತಮ್ಮ ಗೋತ್ರದ ಇತರ ಕುಟುಂಬಗಳ ಹತ್ತಿರ ವಾಸಿಸಿದರು.</verse>
				<verse number="33">ಕೀಷನ ತಂದೆ ನೇರ. ಕೀಷ ಅರಸ ಸೌಲನ ತಂದೆ. ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಷ್ಬಾಳ ಎಂಬವರು ಸೌಲನ ಮಕ್ಕಳು.</verse>
				<verse number="34">ಯೋನಾತಾನ್ ಮೆರೀಬ್ಬಾಳನ ತಂದೆ. ಇವನು ಮೀಕನ ತಂದೆ.</verse>
				<verse number="35">ಮೀಕನಿಗೆ ನಾಲ್ವರು ಮಕ್ಕಳು - ಪೀತೋನ್, ಮೆಲಿಕ್, ತರೇಯ, ಆಹಾಜ್ ಎಂಬವರು.</verse>
				<verse number="36">ಆಹಾಜ ಯೆಹೋವಾದ್ಧಾಹನ ತಂದೆ. ಇವನಿಗೆ ಮೂರು ಜನ ಮಕ್ಕಳು - ಅಲೆಮೆತ್, ಅಜ್ಮಾವೆತ್, ಜಿಮ್ರೀ ಎಂಬವರು. ಜಿಮ್ರೀ ಮೋಚನ ತಂದೆ.</verse>
				<verse number="37">ಮೋಚನು ಬಿನ್ನನಿಗೆ, ಬಿನ್ನನು ರಾಫನಿಗೆ, ರಾಫನು ಎಲ್ಲಾಸನಿಗೆ, ಎಲ್ಲಾಸ ಅಚೇಲನಿಗೆ ತಂದೆಯಾಗಿದ್ದರು.</verse>
				<verse number="38">ಅಚೇಲನಿಗೆ ಆರು ಜನ ಮಕ್ಕಳಿದ್ದರು: ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ, ಹಾನಾನ್ ಎಂಬವರು.</verse>
				<verse number="39">ಅಚೇಲನ ತಮ್ಮನಾದ ಏಷೆಕನ ಮಕ್ಕಳು - ಮೊದಲನೆಯವನು ಊಲಾಮ್, ಎರಡನೆಯವನು ಯೆಯೂಷ್, ಮೂರನೆಯವನು ಎಲೀಫೆಲೆಟ್ ಎಂಬವರು.</verse>
				<verse number="40">ಊಲಾಮನ ಮಕ್ಕಳು ಶೂರಸೈನಿಕರೂ ಬಿಲ್ಲುವಿದ್ಯೆಯಲ್ಲಿ ಪರಿಣಿತರೂ ಆಗಿದ್ದರು. ಅವನಿಗೆ ಒಟ್ಟು ಒಂದುನೂರ ಐವತ್ತು ಮಂದಿ ಮಕ್ಕಳು ಮೊಮ್ಮಕ್ಕಳೂ ಇದ್ದರು. ಇವರೆಲ್ಲರೂ ಬೆನ್ಯಾಮೀನ್ ಗೋತ್ರದವರು.</verse>
			</chapter>
			<chapter number="9">
				<verse number="1">ಇಸ್ರಯೇಲಿನ ಎಲ್ಲಾ ಜನರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ಪಟ್ಟಿಮಾಡಲಾಗಿದೆ. ಈ ಮಾಹಿತಿ ‘ಇಸ್ರಯೇಲಿನ ಅರಸರ ಪುಸ್ತಕ’ದಲ್ಲಿ ದಾಖಲಾಗಿದೆ. ಯೆಹೂದ್ಯರು ತಮ್ಮ ಪಾಪಕ್ಕೆ ಶಿಕ್ಷೆಯಾಗಿ ಬಾಬಿಲೋನಿಗೆ ಸೆರೆಯಾಳುಗಳಾಗಿ ಹೋಗಬೇಕಾಯಿತು.</verse>
				<verse number="2">ಪಟ್ಟಣಗಳಲ್ಲಿದ್ದ ತಮ್ಮ ಸೊತ್ತುಗಳಿಗೆ ಹಿಂದಿರುಗಿ ಬಂದವರಲ್ಲಿ ಇಸ್ರಯೇಲಿನ ಜನಸಾಮಾನ್ಯರೂ ಯಾಜಕರೂ ಲೇವಿಯರೂ ದೇವಾಲಯದ ಕೆಲಸದವರೂ ಸೇರಿದ್ದರು.</verse>
				<verse number="3">ಯೆಹೂದ, ಬೆನ್ಯಾಮೀನ್, ಎಫ್ರಯಿಮ್ ಮತ್ತು ಮನಸ್ಸೆ ಗೋತ್ರಗಳವರು ಜೆರುಸಲೇಮಿನಲ್ಲಿ ವಾಸಮಾಡಲು ಹೋದರು.</verse>
				<verse number="4">ಜೆರುಸಲೇಮಿನಲ್ಲಿ ಯೆಹೂದನ ಗೋತ್ರದ ಆರುನೂರ ತೊಂಬತ್ತು ಕುಟುಂಬಗಳು ನೆಲಸಿದವು. ಯೆಹೂದನ ಮಗ ಪೆರೆಚನ ಸಂತತಿಯವರಿಗೆ ಅಮ್ಮೀಹೂದನ ಮಗನೂ ಒಮ್ರಿಯ ಮೊಮ್ಮಗನೂ ಆದ ಊತೈ ನಾಯಕನಾಗಿದ್ದನು. ಇಮ್ರಿ ಮತ್ತು ಬಾನಿ ಎಂಬವರು ಅವನ ಪೂರ್ವಜರಲ್ಲಿ ಇಬ್ಬರು. ಯೆಹೂದನ ಮಗ ಶೇಲಾಹನ ಸಂತಾನದವರಿಗೆ ಆಸಾಯನು ನಾಯಕ ಹಾಗೂ ಗೋತ್ರದ ಮುಖ್ಯಸ್ಥನಾಗಿದ್ದನು. ಯೆಹೂದನ ಮಗ ಜೆರಹನ ಸಂತತಿಯವರಿಗೆ ಯೆಯೂವೇಲ್ ನಾಯಕನಾಗಿದ್ದನು.</verse>
				<verse number="5"></verse>
				<verse number="6"></verse>
				<verse number="7">ಜೆರುಸಲೇಮಿನಲ್ಲಿ ನೆಲೆಸಿದ ಬೆನ್ಯಾಮೀನನ ಗೋತ್ರದವರು: ಸಲ್ಲೂ - ಇವನು ಮೆಷುಲ್ಲಾಮನ ಮಗ ಹೋದವ್ಯನ ಮೊಮ್ಮಗ ಹಾಗೂ ಹಸ್ಸೆನುವಾಹನ ಮರಿಮಗ. ಇಬ್ನಿಯಾಹ - ಇವನು ಯೆರೋಹಾಮನ ಮಗ. ಏಲಾ - ಇವನು ಶೆಫಟ್ಯನ ಮಗ ರೆಯೂವೇಲನ ಮೊಮ್ಮಗ, ಇಬ್ನಿಯಾಹನ ಮರಿಮಗ.</verse>
				<verse number="8"></verse>
				<verse number="9">ಈ ಗೋತ್ರದ ಒಂಬೈನೂರ ಐವತ್ತಾರು ಕುಟುಂಬಗಳು ಅಲ್ಲಿ ನೆಲೆಸಿದ್ದವು. ಮೇಲೆ ಹೇಳಿದವರು ಆಯಾ ಗೋತ್ರಗಳ ಪ್ರಧಾನ ಪುರುಷರಾಗಿದ್ದರು.</verse>
				<verse number="10">ಜೆರುಸಲೇಮಿನಲ್ಲಿ ನೆಲೆಸಿದ ಯಾಜಕರು: ಯೆದಾಯ, ಯೆಹೋಯಾರೀಬ್, ಯಾಕೀನ್, ಹಿಲ್ಕೀಯನ ಮಗ ಅಜರ್ಯ - ಇವನು ದೇವಾಲಯದ ಪ್ರಮುಖ ಅಧಿಕಾರಿ. ಇವನ ಪೂರ್ವಜರಲ್ಲಿ ಮೆಷುಲ್ಲಾಮ, ಚಾದೋಕ್, ಮೆರಾಯೋತ್ ಮತ್ತು ಅಹೀಚೂಬ ಎಂಬವರು ಇದ್ದರು. ಯೆಹೋರಾಮನ ಮಗ ಅದಾಯ: ಇವನ ಪೂರ್ವಜರಲ್ಲಿ ಪಶ್ಹೂರ, ಮಲ್ಕೀಯ ಎಂಬವರಿದ್ದರು. ಅದೀಯೋಲನ ಮಗ ಮಾಸೈ: ಇವನ ಪೂರ್ವಜರಲ್ಲಿ ಯಹ್ಜೇರ, ಮೆಷುಲ್ಲಾಮ, ಮೆಷಿಲ್ಲೇಮೋತ, ಇಮ್ಮೇರ ಎಂಬವರಿದ್ದರು.</verse>
				<verse number="11"></verse>
				<verse number="12"></verse>
				<verse number="13">ಗೋತ್ರಗಳ ಮುಖ್ಯಸ್ಥರಾದ ಯಾಜಕರ ಒಟ್ಟು ಸಂಖ್ಯೆ ಒಂದು ಸಾವಿರದ ಏಳನೂರ ಅರವತ್ತು ಮಂದಿ, ದೇವಾಲಯದ ಎಲ್ಲಾ ಕೆಲಸಗಳಲ್ಲಿ ಅವರು ನಿಪುಣರಾಗಿದ್ದರು.</verse>
				<verse number="14">ಜೆರುಸಲೇಮಿನಲ್ಲಿ ನೆಲೆಸಿದ ಲೇವಿಯರು: ಹಷಬ್ಯನ ಮಗ ಶೆಮಾಯ; ಇವನ ಪೂರ್ವಜರಲ್ಲಿ ಅಜ್ರೀಕಾಮ, ಹಷಬ್ಯ ಹಾಗು ಮೆರಾರೀ ಗೋತ್ರದ ಬಕ್ಬಕ್ಕರ್, ಹೆರೆಷ್, ಗಾಲಾಲ್ ಎಂಬವರಿದ್ದರು. ಶೆಮಾಯನ ಮಗ ಓಬದ್ಯ: ಇವನ ಪೂರ್ವಜರಲ್ಲಿ ಗಾಲಾಲ, ಯದೂತೂನ ಎಂಬವರಿದ್ದರು. ಮೀಕನ ಮಗ ಮತ್ತನ್ಯ: ಇವನ ಪೂರ್ವಜರಲ್ಲಿ ಜಿಕ್ರೀ, ಆಸಾಫ ಎಂಬವರಿದ್ದರು. ಆಸನ ಮಗನೂ ಎಲ್ಕಾನನ ಮೊಮ್ಮಗನೂ ಆದ ಬೆರೆಕ್ಯ; ನಟೋಫಾತ್ಯರ ಗ್ರಾಮಗಳಲ್ಲಿ ಇವನು ನೆಲೆಸಿದ್ದನು.</verse>
				<verse number="15"></verse>
				<verse number="16"></verse>
				<verse number="17">ಜೆರುಸಲೇಮಿನಲ್ಲಿ ನೆಲೆಸಿದ ದೇವಾಲಯದ ದ್ವಾರಪಾಲಕರು: ಶಲ್ಲೂಮ್, ಅಕ್ಕೂಬ್, ಟಲ್ಮೋನ್, ಅಹೀಮಾನ್ ಎಂಬವರು. ಶಲ್ಲೂಮ್ ಅವರ ಮುಖ್ಯಸ್ಥನಾಗಿದ್ದನು.</verse>
				<verse number="18">ಇದುವರೆಗೂ ಶಲ್ಲೂಮನ ಕುಟುಂಬಸ್ಥರು ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲನ್ನು ಕಾಯುತ್ತಿದ್ದಾರೆ. ಇದಕ್ಕೆ ಮೊದಲು ಅವರು ಲೇವಿಯರ ಪಾಳೆಯಗಳ ಕಾವಲುಗಾರರಾಗಿ ಇದ್ದರು.</verse>
				<verse number="19">ಕೋರೇಯನ ಮಗನೂ ಎಬ್ಯಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನು ಹಾಗೂ ಕೋರಹನ ಗೋತ್ರದ ಸದಸ್ಯರು, ದೇವದರ್ಶನದ ಗುಡಾರದ ದ್ವಾರವನ್ನು ಕಾಯುವ ಜವಬ್ದಾರಿ ವಹಿಸಿಕೊಂಡು ಇದ್ದರು.ಅವರ ಪೂರ್ವಜರು ಸಹ ಸರ್ವೇಶ್ವರನ ಗುಡಾರವನ್ನು ಕಾಯುವವರಾಗಿದ್ದರು.</verse>
				<verse number="20">ಎಲ್ಲಾಜಾರನ ಮಗ ಫೀನೆಹಾಸ ದ್ವಾರಪಾಲಕರ ಮೇಲ್ವಿಚಾರಕನಾಗಿದ್ದನು. ಸರ್ವೇಶ್ವರನ ಆಶೀರ್ವಾದ ಅವನ ಮೇಲಿತ್ತು.</verse>
				<verse number="21">ಮೆಷೆಲೆಮ್ಮನ ಮಗ ಜೆಕರ್ಯನು ದೇವದರ್ಶನದ ಗುಡಾರದ ದ್ವಾರಪಾಲಕನಾಗಿದ್ದನು.</verse>
				<verse number="22">ಒಟ್ಟು ಇನ್ನೂರ ಹನ್ನೆರಡು ಮಂದಿ, ದ್ವಾರಪಾಲಕರಾಗಿ ನೇಮಕಗೊಂಡಿದ್ದರು. ಅವರು ನೆಲೆಸಿದ್ದ ಗ್ರಾಮಗಳಲ್ಲಿ ಅವರ ಹೆಸರುಗಳು ದಾಖಲಾಗಿದ್ದವು. ಈ ಜವಾಬ್ದಾರಿಯ ಸ್ಥಾನಗಳಿಗೆ ಅವರ ಪೂರ್ವಜರನ್ನು ನೇಮಿಸಿದವರು ಅರಸ ದಾವೀದನು ಮತ್ತು ಪ್ರವಾದಿ ಸಮುವೇಲನು.</verse>
				<verse number="23">ಅವರ ವಂಶಜರು ದೇವಾಲಯದ ದ್ವಾರಪಾಲಕರಾಗಿ ಸೇವೆ ಮುಂದುವರೆಸಿಕೊಂಡು ಬಂದರು.</verse>
				<verse number="24">ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ದಿಕ್ಕುಗಳಲ್ಲಿ ಒಂದೊಂದು ದ್ವಾರ ಇದ್ದು ಪ್ರತಿಯೊಂದಕ್ಕೂ ಒಬ್ಬೊಬ್ಬ ಪ್ರಮುಖ ದ್ವಾರಪಾಲಕನಿದ್ದನು.</verse>
				<verse number="25">ಈ ಪ್ರಮುಖ ದ್ವಾರಪಾಲಕರಿಗೆ ಗ್ರಾಮಗಳಲ್ಲಿ ನೆಲೆಸಿದ್ದ ಅವರ ಬಂಧುಗಳು ಸಹಾಯಕರಾಗಿದ್ದರು. ಅವರು ಸರದಿಯ ಮೇಲೆ ಏಳೇಳು ದಿವಸ ಬಂದು ಸಹಾಯ ಮಾಡಬೇಕಾಗಿತ್ತು.</verse>
				<verse number="26">ನಾಲ್ಕು ಜನ ಮುಖ್ಯ ದ್ವಾರಪಾಲಕರು ಲೇವಿಯರಾಗಿದ್ದು ಅವರಿಗೆ ಅಂತಿಮ ಜವಾಬ್ದಾರಿ ಕೊಡಲಾಗಿತ್ತು. ದೇವಾಲಯದ ಕೋಣೆಗಳನ್ನು ಹಾಗೂ ಭಂಡಾರಗಳನ್ನು ಅವರು ನೋಡಿಕೊಳ್ಳಬೇಕಾಗಿತ್ತು.</verse>
				<verse number="27">ದೇವಾಲಯವನ್ನು ಕಾಯುವುದೂ ಪ್ರತಿದಿನ ಬೆಳಿಗ್ಗೆ ಬಾಗಿಲುಗಳನ್ನು ತೆರೆಯುವುದೂ ಅವರ ಕರ್ತವ್ಯವಾಗಿತ್ತು. ಆದುದರಿಂದ ಅವರು ದೇವಾಲಯದ ಹತ್ತಿರವೇ ಇರುತ್ತಿದ್ದರು.</verse>
				<verse number="28">ಪೂಜಾಸಾಮಗ್ರಿಗಳನ್ನು ನೋಡಿಕೊಳ್ಳುವ ಜವಾಬ್ದಾರಿ ಇತರ ಲೇವಿಯರದಾಗಿತ್ತು. ಅವುಗಳನ್ನು ಕೊಡುವಾಗಲೂ ಮರಳಿ ತೆಗೆದುಕೊಳ್ಳುವಾಗಲೂ ಲೆಕ್ಕಿಸುತ್ತಿದ್ದರು.</verse>
				<verse number="29">ಇತರರು ಬೇರೆ ಪವಿತ್ರ ಸಲಕರಣೆಗಳಾದ ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ ಹಾಗೂ ಪರಿಮಳ ದ್ರವ್ಯಗಳ ಸರಬರಾಜು ಮಾಡುವ ಜವಾಬ್ದಾರಿಕೆ ಹೊಂದಿದ್ದರು.</verse>
				<verse number="30">ಆದರೆ ಪರಿಮಳದ್ರವ್ಯಗಳನ್ನು ಮಿಶ್ರಮಾಡುವ ಜವಾಬ್ದಾರಿ ಯಾಜಕರದಾಗಿತ್ತು.</verse>
				<verse number="31">ಕೋರಹಿಯ ಗೋತ್ರದ ಶಲ್ಲೂಮನ ಚೊಚ್ಚಲು ಮಗ ಮತ್ತಿತ್ಯ ಎಂಬ ಲೇವಿಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನಾಗಿದ್ದನು.</verse>
				<verse number="32">ಕೇಹಾತ್ಯ ಗೋತ್ರದ ಮಿಕ್ಕ ಸದಸ್ಯರು ಪ್ರತೀ ಸಬ್ಬತ್ ದಿನ ದೇವಾಲಯದಲ್ಲಿ ಸಮರ್ಪಿಸಲಾಗುತ್ತಿದ್ದ ನೈವೇದ್ಯದ ರೊಟ್ಟಿಗಳನ್ನು ತಯಾರಿಸುವ ಜವಾಬ್ದಾರಿ ಹೊಂದಿದ್ದರು.</verse>
				<verse number="33">ಇನ್ನು ಕೆಲವು ಲೇವಿಯ ಕುಟುಂಬಗಳ ಮೇಲೆ ದೇವಾಲಯದ ಸಂಗೀತದ ಹೊಣೆಯಿತ್ತು. ಈ ಕುಟುಂಬಗಳ ಮುಖ್ಯಸ್ಥರು ದೇವಾಲಯದ ಕಟ್ಟಡಗಳಲ್ಲಿ ವಾಸಿಸುತ್ತಾ, ಹಗಲಿರುಳೂ ಕೆಲಸ ಮಾಡಬೇಕಾಗಿದ್ದರಿಂದ ಬೇರೆ ಕೆಲಸಗಳ ಜವಾಬ್ದಾರಿ ಅವರಿಗಿರಲಿಲ್ಲ.</verse>
				<verse number="34">ಇವರೆಲ್ಲರೂ ತಮ್ಮ ಪೂರ್ವಜರ ಸಾಲಿಗೆ ಸೇರಿದಂತೆ ಲೇವಿ ಗೋತ್ರಗಳ ಮುಖ್ಯಸ್ಥರಾಗಿದ್ದು ಜೆರುಸಲೇಮಿನಲ್ಲೇ ನೆಲೆಸಿದ್ದರು.</verse>
				<verse number="35">ಯೆಯೂವೇಲನು ಗಿಬ್ಯೋನ ಪಟ್ಟಣವನ್ನು ಕಟ್ಟಿ ಅಲ್ಲಿ ನೆಲೆಸಿದನು. ಅವನ ಹೆಂಡತಿ ಮಾಕಳು.</verse>
				<verse number="36">ಅವನ ಚೊಚ್ಚಲು ಮಗ ಅಬ್ದೋನ. ಇತರ ಮಕ್ಕಳ ಹೆಸರು - ಚೂರ್, ಕೀಷ್, ಬಾಳ್, ನೇರ್, ನಾದಾಬ್,</verse>
				<verse number="37">ಗೆದೋರ್, ಅಹ್ಯೋ, ಜೆಕರ್ಯ ಹಾಗೂ ಮಿಕ್ಲೋತ್.</verse>
				<verse number="38">ಮಿಕ್ಲೋತ್ ಶಿಮಾಮ್ ನ ತಂದೆ. ಇವರ ವಂಶಜರು ಜೆರುಸಲೇಮಿನಲ್ಲಿ ತಮ್ಮ ಗೋತ್ರದ ಇತರ ಕುಟುಂಬಗಳ ಸಮೀಪದಲ್ಲಿ ನೆಲೆಸಿದ್ದರು.</verse>
				<verse number="39">ನೇರನು ಕೀಷನ ತಂದೆ. ಕೀಷ ಸೌಲನ ತಂದೆ. ಸೌಲನಿಗೆ ನಾಲ್ವರು ಮಕ್ಕಳು: ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಪ್ಬಾಳ್ ಎಂಬವರು.</verse>
				<verse number="40">ಯೋನಾತಾನ್ ಮೆರೀಬ್ಬಾಳನ ತಂದೆ. ಇವನು ಮೀಕನ ತಂದೆ.</verse>
				<verse number="41">ಮೀಕನಿಗೆ ನಾಲ್ವರು ಮಕ್ಕಳು - ಪೀತೋನ್, ಮೆಲೆಕ್, ತಹ್ರೇಯ ಹಾಗೂ ಅಹಾಜ್ ಎಂಬವರು.</verse>
				<verse number="42">ಅಹಾಜ್ ಯಗ್ರಾಹನ ತಂದೆ. ಇವನು ಅಲೆಮೆತ್, ಅಜ್ಮಾವೆತ್, ಜಿಮ್ರಿ ಎಂಬವರ ತಂದೆ. ಜಿಮ್ರಿ ಮೋಚನ ತಂದೆ.</verse>
				<verse number="43">ಬಿನ್ನ ಮೋಚನ ಮಗ, ಬಿನ್ನನ ಮಗ ರೆಫಾಯ; ಇವನ ಮಗ ಎಲ್ಲಾಸ; ಇವನ ಮಗ ಆಚೇಲ್.</verse>
				<verse number="44">ಆಚೇಲನಿಗೆ ಆರು ಜನ ಮಕ್ಕಳು - ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ, ಓಬದ್ಯ ಹಾಗು ಹಾನಾನ್ ಎಂಬವರು.</verse>
			</chapter>
			<chapter number="10">
				<verse number="1">ಗಿಲ್ಬೋವ ಬೆಟ್ಟದಲ್ಲಿ ಇಸ್ರಯೇಲ್ ಅವರಿಗೂ ಫಿಲಿಷ್ಟಿಯರಿಗೂ ಘೋರಯುದ್ಧ ನಡೆಯಿತು. ಅನೇಕ ಜನ ಇಸ್ರಯೇಲರು ಯುದ್ಧದಲ್ಲಿ ಹತರಾದರು. ಅರಸ ಸೌಲನೂ ಅವನ ಮಕ್ಕಳೂ ಇನ್ನುಳಿದವರೂ ತಪ್ಪಿಸಿಕೊಂಡು ಓಡಿಹೋಗಲು ಪ್ರಯತ್ನಿಸಿದರು.</verse>
				<verse number="2">ಆದರೆ ಫಿಲಿಷ್ಟಿಯರು ಅವರನ್ನು ಬೆನ್ನಟ್ಟಿ ಸೌಲನ ಮಕ್ಕಳಾದ ಯೋನಾತಾನ, ಅಬೀನಾದಾಬ, ಮಲ್ಕೀಷೂವರನ್ನು ಕೊಂದುಹಾಕಿದರು.</verse>
				<verse number="3">ಘೋರ ಯುದ್ಧದ ಮಧ್ಯದಲ್ಲಿ ಸೌಲನು ತಪ್ಪಿಸಿಕೊಂಡು ಹೋಗಲು ಸಾಧ್ಯವಾಗಲಿಲ್ಲ. ವೈರಿ ಬಾಣವು ಅವನಿಗೆ ತಾಕಲು ಅವನು ತೀವ್ರ ಗಾಯಗೊಂಡನು.</verse>
				<verse number="4">ಆಗ ಅವನು ತನ್ನ ಆಯುಧವಾಹಕ ಯುವಕನನ್ನು ಕರೆದು, ‘ದೇವರಲ್ಲಿ ನಂಬಿಕೆ ಇಲ್ಲದ ಈ ಫಿಲಿಷ್ಟಿಯರ ಹಸ್ತಗಳಿಂದ ನಾನು ಸಾಯಬಾರದು. ನಿನ್ನ ಖಡ್ಗವನ್ನು ಹಿಡಿದು ನನ್ನನ್ನು ಕೊಂದುಬಿಡು’, ಎಂದನು. ಆದರೆ ಆ ಯುವಕನು ಭಯಗೊಂಡು ಹಿಂಜರಿದನು. ಸೌಲನು ತನ್ನ ಖಡ್ಗವನ್ನೇ ಎತ್ತಿಟ್ಟು ಅದರ ಮೇಲೆ ಹಾರಿಬಿದ್ದು ಸತ್ತುಹೋದನು.</verse>
				<verse number="5">ಸೌಲನು ಮೃತನಾದದ್ದನ್ನು ನೋಡಿ ಆ ಯುವಕನು ಸಹ ತನ್ನ ಖಡ್ಗದ ಮೇಲೆ ಬಿದ್ದು ಸತ್ತುಹೋದನು.</verse>
				<verse number="6">ಹೀಗೆ ಸೌಲನೂ ಅವನ ಮೂರು ಮಂದಿ ಗಂಡುಮಕ್ಕಳೂ ಅದೇ ದಿವಸ ಮೃತರಾದರು. ಸೌಲನ ಮನೆಯವರಲ್ಲಿ ರಾಜ್ಯ ಆಳಲು ಯಾರೂ ಉಳಿಯಲಿಲ್ಲ.</verse>
				<verse number="7">ತಗ್ಗಿನಲ್ಲಿ ನೆಲೆಸಿದ್ದ ಇಸ್ರಯೇಲರು ತಮ್ಮ ಸೈನ್ಯವು ಪಲಾಯನಗೈಯಿತು ಮತ್ತು ಸೌಲನೂ ಅವನ ಮಕ್ಕಳೂ ಮರಣ ಹೊಂದಿದರು ಎಂಬ ವಾರ್ತೆಯನ್ನು ಕೇಳಿ ಅವರೂ ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಅನಂತರ ಫಿಲಿಷ್ಟಿಯರು ಬಂದು ಅವುಗಳನ್ನು ವಶಪಡಿಸಿಕೊಂಡರು.</verse>
				<verse number="8">ಕಾಳಗದ ಮರುದಿನ ಫಿಲಿಷ್ಟಿಯರು ಸತ್ತವರ ಒಡವೆವಸ್ತುಗಳನ್ನು ಸುಲಿಗೆಮಾಡಲು ಹೋದಾಗ, ಗಿಲ್ಬೋವ ಬೆಟ್ಟದಲ್ಲಿ ಸೌಲ ಹಾಗೂ ಅವನ ಮಕ್ಕಳು ಸತ್ತುಬಿದ್ದಿರುವುದನ್ನು ಕಂಡರು.</verse>
				<verse number="9">ಸೌಲನ ತಲೆಯನ್ನು ಕಡಿದು ದೇಹದಿಂದ ಬೇರ್ಪಡಿಸಿದರು. ಅವನ ಆಯುಧಗಳನ್ನು ಬಿಚ್ಚಿಕೊಂಡರು. ಅವುಗಳೊಂದಿಗೆ ಸುದ್ದಿವಾಹಕರನ್ನು ತಮ್ಮ ನಾಡಿನ ಎಲ್ಲೆಡೆಗೂ ಕಳುಹಿಸಿ, ಈ ಜಯವಾರ್ತೆಯನ್ನು ತಮ್ಮ ದೇವತೆಗಳಿಗೂ ಜನರಿಗೂ ಮುಟ್ಟಿಸಿದರು.</verse>
				<verse number="10">ಸೌಲನ ಆಯುಧಗಳನ್ನು ತೆಗೆದುಕೊಂಡು ಹೋಗಿ ತಮ್ಮ ಒಂದು ಗುಡಿಯಲ್ಲಿಟ್ಟರು. ಸೌಲನ ತಲೆಯನ್ನು ತಮ್ಮ ದೇವರಾದ ದಾಗೋನನ ಗುಡಿಯಲ್ಲಿ ನೇತುಹಾಕಿದರು.</verse>
				<verse number="11">ಸೌಲನಿಗೆ ಫಿಲಿಷ್ಟಿಯರು ಮಾಡಿದ್ದು ಎಲ್ಲವನ್ನೂ ಯಾಬೇಷ್ ಗಿಲ್ಯಾದಿನ ಜನರು ಕೇಳಿದರು.</verse>
				<verse number="12">ಅವರಲ್ಲಿ ಅತೀ ಶೂರರಾದವರು ಹೋಗಿ ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ತೆಗೆದುಕೊಂಡು ಯಾಬೇಷಿಗೆ ಬಂದರು. ಅಲ್ಲಿ ಅವುಗಳನ್ನು ಏಲಾ ಮರದ ಕೆಳಗೆ ಸಮಾಧಿಮಾಡಿ ಏಳು ದಿನ ಉಪವಾಸ ಆಚರಿಸಿದರು.</verse>
				<verse number="13">ಸೌಲನು ಸರ್ವೇಶ್ವರನಿಗೆ ಅವಿಧೇಯನಾದ್ದರಿಂದ ಮರಣ ಹೊಂದಿದನು. ಅವನು ಸರ್ವೇಶ್ವರನ ಆಜ್ಞೆಗಳನ್ನು ಮೀರಿದನು; ಸರ್ವೇಶ್ವರನನ್ನು ವಿಚಾರಿಸದೆ ಭೂತಪ್ರೇತಗಳನ್ನು ವಿಚಾರಿಸಿದನು.</verse>
				<verse number="14">ಆದುದರಿಂದ ಸರ್ವೇಶ್ವರ ಅವನನ್ನು ಕೊಲ್ಲಿಸಿ ಜೆಸ್ಸೆಯ ಮಗ ದಾವೀದನಿಗೆ ರಾಜ್ಯವನ್ನೊಪ್ಪಿಸಿದರು.</verse>
			</chapter>
			<chapter number="11">
				<verse number="1">ಇಸ್ರಯೇಲಿನ ಜನರೆಲ್ಲರೂ ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದರು. “ನೀವು ನಮ್ಮ ರಕ್ತಸಂಬಂಧಿ.</verse>
				<verse number="2">ಅರಸ ಸೌಲ ನಮ್ಮನ್ನು ಆಳುತ್ತಿದ್ದಾಗ ನೀವು ಇಸ್ರಯೇಲರ ದಳಪತಿಯಾಗಿ ಯುದ್ಧ ನಡೆಸಿದಿರಿ. ನಮ್ಮ ದೇವರಾದ ಸರ್ವೇಶ್ವರ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗುವೆ,’ ಎಂದು ವಾಗ್ದಾನ ಮಾಡಿದ್ದು ನಿಮ್ಮನ್ನು ಕುರಿತೇ” ಎಂದು ಹೇಳಿ ವಂದಿಸಿದರು.</verse>
				<verse number="3">ಹೀಗೆ ಇಸ್ರಯೇಲಿನ ನಾಯಕರೆಲ್ಲರೂ ಹೆಬ್ರೋನಿನಲ್ಲಿ ಅರಸ ದಾವೀದನ ಬಳಿಗೆ ಬಂದು ಬಿನ್ನವಿಸಿದರು. ದಾವೀದನು ಅವರೊಂದಿಗೆ ಸರ್ವೇಶ್ವರನ ಸನ್ನಿಧಿಯಲ್ಲಿ ಒಂದು ಒಪ್ಪಂದ ಮಾಡಿಕೊಂಡನು. ಅವರು ಅವನನ್ನು ಅಭಿಷೇಕಿಸಿದರು. ಹೀಗೆ ಸರ್ವೇಶ್ವರ ಸಮುವೇಲನ ಮುಖಾಂತರ ಮಾಡಿದ ವಾಗ್ದಾನ ನೆರವೇರಿತು; ದಾವೀದನು ಇಸ್ರಯೇಲರ ಅರಸನಾದನು.</verse>
				<verse number="4">ಆ ಕಾಲದಲ್ಲಿ ಜೆರುಸಲೇಮ್ ಪಟ್ಟಣವನ್ನು ‘ಯೆಬೂಸ’ ಎಂದು ಕರೆಯಲಾಗುತ್ತಿತ್ತು. ಅಲ್ಲಿಯ ಮೂಲನಿವಾಸಿಗಳಾದ ಯೆಬೂಸಿಯರು ಆ ಪ್ರದೇಶದಲ್ಲಿ ಇನ್ನೂ ವಾಸಿಸುತ್ತಿದ್ದರು. ಅರಸ ದಾವೀದನೂ ಎಲ್ಲಾ ಇಸ್ರಯೇಲರೂ ಜೆರುಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿದರು.</verse>
				<verse number="5">ದಾವೀದನು ಪಟ್ಟಣದೊಳಗೆ ಪ್ರವೇಶಿಸಲು ಎಂದಿಗೂ ಸಾಧ್ಯವಿಲ್ಲವೆಂದು ಯೆಬೂಸಿಯರು ಹೇಳಿದ್ದರು. ಆದರೂ ದಾವೀದನು ಪಟ್ಟಣವನ್ನು ಪ್ರವೇಶಿಸಿ ಸಿಯೋನ್ ಕೋಟೆಯನ್ನು ವಶಪಡಿಸಿಕೊಂಡನು. ಅದು ‘ದಾವೀದ್ ನಗರ’ ಎಂದು ಹೆಸರು ಪಡೆಯಿತು.</verse>
				<verse number="6">‘ಯೆಬೂಸಿಯರಲ್ಲಿ ಒಬ್ಬನನ್ನು ಯಾರು ಮೊದಲು ಕೊಲ್ಲುವನೋ ಅವನು ನನ್ನ ದಳಪತಿಯಾಗುವನು’ ಎಂದು ದಾವೀದ ಪ್ರಕಟಿಸಿದ್ದನು. ಜೆರೂಯಳ ಮಗ ಯೋವಾಬನು ಯುದ್ಧದಲ್ಲಿ ಮುಂದೆ ಹೋಗಿ ಸೇನಾಪತಿಯಾದನು.</verse>
				<verse number="7">ಆ ಕೋಟೆಯನ್ನು ದಾವೀದನು ತನ್ನ ವಾಸಸ್ಥಾನವನ್ನಾಗಿ ಮಾಡಿಕೊಂಡದ್ದರಿಂದ ಅದಕ್ಕೆ ‘ದಾವೀದ ನಗರ’ ಎಂದು ಹೆಸರಾಯಿತು.</verse>
				<verse number="8">ಗುಡ್ಡದ ಪೂರ್ವದಿಕ್ಕಿನ ಸ್ಥಳವನ್ನು ಮಟ್ಟಮಾಡಿ ಪಟ್ಟಣವನ್ನು ಪುನಃ ಕಟ್ಟಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಜೀರ್ಣೋದ್ಧಾರ ಮಾಡಿದನು.</verse>
				<verse number="9">ಸರ್ವಶಕ್ತ ಸರ್ವೇಶ್ವರಸ್ವಾಮಿ ದಾವೀದನೊಂದಿಗೆ ಇದ್ದುದರಿಂದ ಅವನು ದಿನದಿಂದ ದಿನಕ್ಕೆ ಅಭಿವೃದ್ಧಿ ಹೊಂದಿದನು.</verse>
				<verse number="10">ದಾವೀದನ ಸುಪ್ರಸಿದ್ಧ ರಣವೀರರ ಪಟ್ಟಿ ಇದು: ಸರ್ವೇಶ್ವರ ಮಾಡಿದ ವಾಗ್ದಾನಕ್ಕೆ ಅನುಗುಣವಾಗಿ ದಾವೀದನು ಅರಸನಾಗಲು ಇತರ ಇಸ್ರಯೇಲರೊಂದಿಗೆ ಸಹಾಯ ಮಾಡಿದವರು ಹಾಗೂ ಅವನ ರಾಜ್ಯ ಶಕ್ತಿಯುತವಾಗಿರುವಂತೆ ಮಾಡಿದವರು ಇವರು:</verse>
				<verse number="11">ಹಕ್ಮೋನ ಗೋತ್ರದ ಯಾಷೊಬ್ಬಾಮ ಮೊದಲನೆಯವನು. ಇವನು ‘ಮೂವರು ಪ್ರಮುಖ ವೀರರು’ ಎಂಬ ಪಡೆಯ ನಾಯಕ. ಇವನು ತನ್ನ ಈಟಿಯಿಂದ ಮುನ್ನೂರು ಜನರ ಮೇಲೆ ಹೋರಾಡಿ ಅವರೆಲ್ಲರನ್ನೂ ಒಂದೇ ಕಾಳಗದಲ್ಲಿ ಕೊಂದುಹಾಕಿದನು.</verse>
				<verse number="12">ಪ್ರಸಿದ್ಧರಾದ ‘ಮೂವರು ಪ್ರಮುಖರು’ ಎಂಬ ಪಡೆಯಲ್ಲಿ ಎರಡನೆಯವನು ಅಹೋಹ್ಯ ಗೋತ್ರದ ದೋದೋ ಎಂಬವನ ಮಗ ಎಲ್ಲಾಜಾರನು.</verse>
				<verse number="13">ಈತ ಪಸ್ದಮ್ಮೀಮಿ ಎಂಬಲ್ಲಿ ಫಿಲಿಷ್ಟಿಯರಿಗೆ ವಿರುದ್ಧ ಹೂಡಿದ ಕಾಳಗದಲ್ಲಿ ದಾವೀದನ ಪರವಾಗಿ ಹೋರಾಡಿದನು. ಇಸ್ರಯೇಲರು ಹಿಂಜರಿದು ಓಡಿಹೋಗುತ್ತಿದ್ದಾಗ ಇವನು ಜವೆಗೋದಿಯ ಹೊಲದಲ್ಲಿ ಇದ್ದನು.</verse>
				<verse number="14">ಆಗ ಅವನೂ ಅವನ ಸಂಗಡಿಗರೂ ಹೊಲದ ಮಧ್ಯದಲ್ಲಿ ನಿಂತುಕೊಂಡು ಫಿಲಿಷ್ಟಿಯರಿಗೆ ವಿರೋಧವಾಗಿ ಕಾದಾಡಿದರು. ಸರ್ವೇಶ್ವರ ಅವನಿಗೆ ಮಹಾಜಯವನ್ನು ದಯಪಾಲಿಸಿದರು.</verse>
				<verse number="15">ಅದುಲ್ಲಾಮ್ ಗವಿಯ ಹತ್ತಿರ ದಾವೀದನು ವಾಸಿಸುತ್ತಿದ್ದಾಗ, ಮೂವತ್ತು ಪ್ರಮುಖ ರಣವೀರರಲ್ಲಿ ಮೂವರು ಒಂದು ದಿನ ಒಂದು ಬಂಡೆಯ ಬಳಿಗೆ ಹೋದರು. ಅಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ಕೊಳ್ಳದಲ್ಲಿ ಬೀಡುಬಿಟ್ಟದ್ದನ್ನು ಕಂಡರು.</verse>
				<verse number="16">ಆ ಸಮಯದಲ್ಲಿ ದಾವೀದನು ಭದ್ರವಾದ ದಿಣ್ಣೆಯ ಮೇಲಿದ್ದನು. ಫಿಲಿಷ್ಟಿಯರು ಬೆತ್ಲೆಹೇಮನ್ನು ವಶಪಡಿಸಿಕೊಂಡಿದ್ದರು.</verse>
				<verse number="17">ದಾವೀದನು ತನ್ನೂರನ್ನು ಜ್ಞಾಪಿಸಿಕೊಂಡು ಅಸ್ವಸ್ಥನಾಗಿ ‘ಬೆತ್ಲೆಹೇಮಿನ ದ್ವಾರದ ಬಳಿಯಿರುವ ಬಾವಿಯಿಂದ ನನಗೆ ಕುಡಿಯಲು ಯಾರಾದರೂ ನೀರನ್ನು ತಂದುಕೊಡಬಲ್ಲಿರೋ!’ ಎಂದು ತನ್ನ ಅಪೇಕ್ಷೆಯನ್ನು ವ್ಯಕ್ತಪಡಿಸಿದನು.</verse>
				<verse number="18">ಪ್ರಸಿದ್ಧರಾದ ಮೂವರು ರಣವೀರರು ಫಿಲಿಷ್ಟಿಯರ ಪಾಳೆಯವನ್ನು ಹಾದುಹೋಗಿ ಬಾವಿಯಿಂದ ನೀರನ್ನು ಸೇದಿಕೊಂಡು ದಾವೀದನಿಗೆ ತಂದುಕೊಟ್ಟರು. “ನಾನು ಈ ನೀರನ್ನು ಎಂದೆಂದಿಗೂ ಕುಡಿಯಬಾರದು. ಇದನ್ನು ಕುಡಿದರೆ, ತಮ್ಮ ಪ್ರಾಣಗಳನ್ನೇ ಪಣವಾಗಿಟ್ಟ ಈ ಮೂವರ ರಕ್ತವನ್ನು ಕುಡಿದಂತಾಗುವುದು,” ಎಂದು ಹೇಳಿ,</verse>
				<verse number="19">ದಾವೀದನು ಆ ನೀರನ್ನು ಕುಡಿಯದೇ ಸರ್ವೇಶ್ವರನಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು. ಈ ಮೂರು ಮಂದಿ ರಣವೀರರು ಸಾಧಿಸಿದ ಪರಾಕ್ರಮವಿದು.</verse>
				<verse number="20">ಯೋವಾಬನ ಸಹೋದರ ಅಬ್ಷೈ ‘ಮೂವತ್ತು ಪ್ರಮುಖ ವೀರರು,’ ಎಂಬ ಪಡೆಯ ನಾಯಕನಾಗಿದ್ದನು. ಅವನು ತನ್ನ ಈಟಿಯಿಂದ ಮುನ್ನೂರು ಜನರಿಗೆ ವಿರೋಧವಾಗಿ ಹೋರಾಡಿ ಅವರನ್ನು ಕೊಂದುಹಾಕಿ ‘ಮೂವತ್ತು ಪ್ರಮುಖ ವೀರರು ‘ ಎಂಬ ಪಡೆಯಲ್ಲಿ ಪ್ರಖ್ಯಾತ ನಾದನು.</verse>
				<verse number="21">ಅವನು ಈ ‘ಮೂವತ್ತು ಪ್ರಮುಖ ವೀರರ’ ಪಡೆಯಲ್ಲಿ ಪ್ರಸಿದ್ಧನಾದುದಲ್ಲದೇ ಅದರ ನಾಯಕನೂ ಆದನು. ಆದರೆ ‘ಮೂವರು ಪ್ರಮುಖ ವೀರರು’ ಎಂಬ ಪಡೆಯವರಷ್ಟು ಪ್ರಸಿದ್ಧನಾಗಲಿಲ್ಲ.</verse>
				<verse number="22">ಕಬ್ಜಯೇಲಿನ ಯೆಹೋಯಾದನ ಮಗ ಬೇನಾಯನು ಪ್ರಖ್ಯಾತಿ ಪಡೆದ ಸೈನಿಕನಾಗಿದ್ದನು. ಅವನು ಅನೇಕ ಶೂರಕೃತ್ಯಗಳನ್ನೆಸಗಿದನು: ಮೋವಾಬ್ಯರ ಇಬ್ಬರು ಬಲಶಾಲಿ ಯುದ್ಧವೀರರನ್ನು ಕೊಂದದ್ದೂ ಈ ಕೃತ್ಯಗಳಲ್ಲಿ ಒಂದಾಗಿದೆ. ಒಮ್ಮೆ ಚಳಿಗಾಲದಲ್ಲಿ ತಗ್ಗುಪ್ರದೇಶದಲ್ಲಿ ಹೋಗಿ ಒಂದು ಸಿಂಹವನ್ನು ಕೊಂದನು.</verse>
				<verse number="23">ಇನ್ನೊಮ್ಮೆ ಏಳುವರೆ ಅಡಿ ಎತ್ತರದ, ಅತೀ ಬಲವಾದ ಈಟಿಯನ್ನು ಹೊಂದಿದ್ದ, ಬಲಾಢ್ಯನಾದ ಈಜಿಪ್ಟನೊಬ್ಬನನ್ನು ಸೋಲಿಸಿದನು. ಆ ಈಜಿಪ್ಟಿನವನ ಕೈಯಲ್ಲಿ ಬಲವಾದ ಈಟಿ ಇತ್ತು. ಇವನಾದರೋ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ, ಅವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು ಅದರಿಂದಲೇ ಅವನನ್ನು ಸಂಹರಿಸಿದನು.</verse>
				<verse number="24">‘ಮೂವತ್ತು ಪ್ರಮುಖ ವೀರರು’ ಪಡೆಯ ಒಬ್ಬನಾದ ಬೆನಾಯ ಮಾಡಿದ ಶೂರಕೃತ್ಯ ಇದು.</verse>
				<verse number="25">ಇವನು ‘ಮೂವತ್ತು ಪ್ರಮುಖ ವೀರರ’ ಪಡೆಯಲ್ಲಿ ಪ್ರಸಿದ್ಧನಾಗಿದ್ದನೇ ಹೊರತು, ‘ಮೂವರು ಪ್ರಮುಖ ವೀರರ’ ಪಡೆಯವರಷ್ಟು ಪ್ರಖ್ಯಾತನಾಗಲಿಲ್ಲ. ಅವನನ್ನು ದಾವೀದನು ತನ್ನ ಕಾವಲುಗಾರರಲ್ಲಿ ಮುಖ್ಯಸ್ಥನನ್ನಾಗಿ ಇಟ್ಟುಕೊಂಡಿದ್ದನು.</verse>
				<verse number="26">ಪ್ರಖ್ಯಾತರಾದ ಇನ್ನಿತರ ಸೈನಿಕರು: ಯೋವಾಬನ ತಮ್ಮ ಅಸಾಹೇಲ, ಬೆತ್ಲೆಹೇಮಿನ ದೋದೋವಿನ ಮಗ ಎಲ್ಖಾನಾನ್,</verse>
				<verse number="27">ಹರೋರಿನ ಶಮ್ಮೋತ್, ಪೆಲೋನ್ಯನಾದ ಹೆಲೆಚ್,</verse>
				<verse number="28">ತೆಕೋವದ ಇಕ್ಕೇಷನ ಮಗ ಈರ, ಅನತೋತಿನ ಅಬೀಯೆಜೆರ್,</verse>
				<verse number="29">ಹುಷ ಊರಿನ ಸಿಬ್ಕೈ, ಅಹೋಹಿನ ಈಲೈ,</verse>
				<verse number="30">ನೆಟೋಫದ ಮಹರೈ, ನೆಟೋಫದ ಬಾಣನ ಮಗ ಹೇಲೆದ್,</verse>
				<verse number="31">ಬೆನ್ಯಾಮೀನ್ ದೇಶದ ಗಿಬೆಯ ಊರಿನ ರೀಬೈನ ಮಗ ಈತೈ, ಪಿರಾತೋನ್ಯದ ಬೆನಾಯ,</verse>
				<verse number="32">ನಹಲೇಗಾಷಿನ ಹೂರೈ, ಅರಾಮಾ ತಗ್ಗಿನ ಅಬೀಯೇಲ್,</verse>
				<verse number="33">ಬಹರೂಮ್ಯದ ಅಜ್ಮಾವೆತ್, ಶಾಲ್ಬೋನ್ಯದ ಎಲೆಯಖ್ಬ,</verse>
				<verse number="34">ಗೀಜೋನಿನ ಹಾಷೇಮನ ಮಕ್ಕಳು, ಹರಾರ್ಯದ ಶಾಗೇಯನ ಮಗ ಯೋನಾತಾನ,</verse>
				<verse number="35">ಹರಾರ್ಯದ ಶಾಕಾರನ ಮಗ ಅಹೀಯಾಮ್, ಊರನ ಮಗ ಎಲೀಫಲ್,</verse>
				<verse number="36">ಮೆಕೆರಾತ್ಯದ ಹೇಫೆರ್, ಪೆಲೋನ್ಯದ ಅಹೀಯ,</verse>
				<verse number="37">ಕರ್ಮೇಲ್ಯದ ಹೆಚ್ರೋ, ಎಜ್ಬೈಯ ಮಗ ನಾರೈ,</verse>
				<verse number="38">ನಾತಾನನ ತಮ್ಮ ಯೋವೇಲ್, ಹಗ್ರೀಯನ ಮಗ ಮಿಬ್ದಾರ್,</verse>
				<verse number="39">ಅಮ್ಮೋನಿನ ಚೆಲೆಕ್, ಬೇರೋತ್ಯನೂ ಚೆರೂಯಳ ಮಗ ಯೋವಾಬನ ಆಯುಧವಾಹಕನೂ ಆಗಿದ್ದ ನಹರೈ,</verse>
				<verse number="40">ಇತ್ರೀಯರಾದ ಈರ ಮತ್ತು ಗಾರೇಬ,</verse>
				<verse number="41">ಹಿತ್ತೀಯನಾದ ಊರೀಯ, ಅಹ್ಲೈಯ ಮಗ ಜಾಬಾದ್,</verse>
				<verse number="42">ಶೀಜನ ಮಗ ಅದೀನ, (ಈತ ರೂಬೇನ್ ಗೋತ್ರದ ಪ್ರಮುಖ ಸದಸ್ಯ, ಮೂವತ್ತು ಸೈನಿಕರ ಒಂದು ಗುಂಪೂ ಅವನಿಗಿತ್ತು).</verse>
				<verse number="43">ಮಾಕನ ಮಗ ಹಾನಾನ್, ಮೆತೆನ ಊರಿನ ಯೋಷಾಫಾಟ್,</verse>
				<verse number="44">ಅಷ್ಟೆರಾತ್ಯದ ಉಜ್ಜೀಯ, ಅರೋಯೇರಿನ ಹೋತಾಮನ ಮಕ್ಕಳಾದ ಶಾಮಾ, ಯೆಗೀಯೇಲರು,</verse>
				<verse number="45">ಶಮ್ರಿಯ ಮಗ ಎದೀಗಯೇಲ್, ಎದೀಗಯೇಲನ ತಮ್ಮನೂ ತೀಚೀಯನೂ ಆದ ಯೋಹ,</verse>
				<verse number="46">ಮಹವೀಯದ ಎಲೀಯೇಲ್, ಎಲ್ನಾಮನ ಮಕ್ಕಳಾದ ಯೆರೀಬೈ ಮತ್ತು ಯೋಷವ್ಯ, ಮೋವಾಬ್ಯನಾದ ಇತ್ಮ, ಎಲೀಯೇಲ್, ಓಬೆದ್,</verse>
				<verse number="47">ಮೆಚೋಬಾಯದ ಯಾಸೀಯೇಲ.</verse>
			</chapter>
			<chapter number="12">
				<verse number="1">ದಾವೀದನು ಅರಸ ಸೌಲನಿಂದ ತಪ್ಪಿಸಿಕೊಂಡು ಚಿಕ್ಲಗ್ ಎಂಬಲ್ಲಿಗೆ ಹೋಗಿ ವಾಸಿಸಿದ್ದನು. ಅಲ್ಲಿ ಬೆನ್ಯಾಮೀನ್ ಗೋತ್ರದ ಅನೇಕ ಅನುಭವಶಾಲಿಗಳೂ ನಂಬಿಗಸ್ಥರೂ ಆದ ಸೈನಿಕರು ಬಂದು ಅವನನ್ನು ಸೇರಿಕೊಂಡರು.</verse>
				<verse number="2">ಸೌಲನೂ ಬೆನ್ಯಾಮೀನ್ ಗೋತ್ರಕ್ಕೆ ಸೇರಿದವನೇ. ದಾವೀದನನ್ನು ಹಿಂಬಾಲಿಸಿದವರು ಎಡಗೈಯಿಂದಾಗಲೀ ಬಲಗೈಯಿಂದಾಗಲೀ ಬಾಣಗಳನ್ನೆಸೆಯುವವರೂ ಕವಣೆಗಳಲ್ಲಿ ಕಲ್ಲುಗಳನ್ನಿಟ್ಟು ಎಸೆಯಲು ಶಕ್ತರೂ ಆಗಿದ್ದರು.</verse>
				<verse number="3">ಅವರು ಗಿಬೇಯದ ಶೇಮಾನ ಮಕ್ಕಳಾದ ಅಹೀಯೆಜೆರ್ ಮತ್ತು ಯೋವಾಷ ಎಂಬವರ ನೇತೃತ್ವದಲ್ಲಿ ಇದ್ದರು. ಆ ಸೈನಿಕರ ಹೆಸರುಗಳು:- ಯೇಜೀಯೇಲ್ ಮತ್ತು ಪೆಲೆಟ - ಅಜ್ಮಾವೆತನ ಮಕ್ಕಳು. ಯೇಹು ಮತ್ತು ಬೆರಾಕ - ಅನತೋತ ಊರಿನವರು. ಇಷ್ಮಾಯ - ಗಿಬ್ಯೋನಿನವನು; ಪ್ರಸಿದ್ಧನಾದ ಸೈನಿಕ, ‘ಮೂವತ್ತು ಪ್ರಮುಖರ’ ಪಟಾಲಮಿನಲ್ಲಿ ಒಬ್ಬ. ಯೆರೆಮೀಯ, ಯಹಜೀಯೇಲ್, ಯೋಹಾನಾನ್, ಯೋಜಾಬಾದ್ - ಗೆದೇರಾ ಊರಿನವರು. ಎಲ್ಲೂಜೈ, ಯೆರೀಮೋತ್, ಬೆಯಲ್ಯ, ಶೆಮರ್ಯ, ಶೆಫಟ್ಯ - ಇವರು ಹರೀಫ್ಯದವರು. ಎಲ್ಕಾನ, ಇಷೀಯ, ಅಜರೇಲ್, ಯೋವೆಜೆರ್ ಮತ್ತು ಯಾಷೊಬ್ಬಮ - ಇವರು ಕೋರಹನ ಗೋತ್ರದವರು. ಯೋವೇಲ ಮತ್ತು ಜೆಬದ್ಯ - ಗೆದೋರಿನ ಯೆರೋಹಾಮನ ಮಕ್ಕಳು.</verse>
				<verse number="4"></verse>
				<verse number="5"></verse>
				<verse number="6"></verse>
				<verse number="7"></verse>
				<verse number="8">ದಾವೀದನು ಮರುಭೂಮಿಯ ಕೋಟೆಯಲ್ಲಿದ್ದಾಗ ಅವನ ಪಡೆಗಳಲ್ಲಿ ಬಂದು ಸೇರಿದ ಗಾದ್ ಗೋತ್ರದ ಪ್ರಸಿದ್ಧರೂ ಅನುಭವಶಾಲಿಗಳೂ ಆದ ಯುದ್ಧವೀರರ ಹೆಸರುಗಳು: ಇವರು ನೋಡಲು ಸಿಂಹಗಳಂತೆ ಭೀಕರರೂ ಪರ್ವತದ ಜಿಂಕೆಗಳಂತೆ ಚುರುಕಾದವರೂ ಗುರಾಣಿ, ಈಟಿಗಳನ್ನು ಉಪಯೋಗಿಸುವುದರಲ್ಲಿ ನಿಪುಣರೂ ಆಗಿದ್ದರು.</verse>
				<verse number="9">ಸೈನಿಕ ಪಂಕ್ತಿಯಲ್ಲಿದ್ದ ಕ್ರಮಕ್ಕೆ ಅನುಸಾರವಾಗಿ ಅವರ ಹೆಸರುಗಳು ಇಂತಿವೆ: ಏಜೆರ್, ಓಬದ್ಯ, ಎಲೀಯಾಬ್, ಮಷ್ಮನ್ನ, ಯೆರೆಮೀಯ, ಅತ್ತೈ, ಎಲೀಯೇಲ್, ಯೋಹಾನಾನ್, ಎಲ್ಜಾಬಾದ್, ಯೆರೆಮೀಯ, ಮಕ್ಬನ್ನೈ ಎಂಬವರು.</verse>
				<verse number="10"></verse>
				<verse number="11"></verse>
				<verse number="12"></verse>
				<verse number="13"></verse>
				<verse number="14">ಗಾದ್ ಗೋತ್ರದ ಈ ಕೆಲವು ಪುರುಷರು ಹಿರಿಯ ಸಹಸ್ರಾಧಿಪತಿಗಳೂ ಕಿರಿಯ ಶತಾಧಿಪತಿಗಳೂ ಆಗಿದ್ದರು.</verse>
				<verse number="15">ಜೋರ್ಡನ್ ನದಿಯು ಪ್ರಥಮ ಮಾಸದಲ್ಲಿ ದಡತುಂಬಿ ಹರಿಯುತ್ತ ಇದ್ದಾಗ ಅದನ್ನು ದಾಟಿ ನದಿಯ ತಗ್ಗಿನ ಪೂರ್ವಪಶ್ಚಿಮ ಪ್ರದೇಶದಲ್ಲಿದ್ದವರೆಲ್ಲರನ್ನು ಓಡಿಸಿಬಿಟ್ಟವರು ಇವರೇ.</verse>
				<verse number="16">ಒಮ್ಮೆ ಬೆನ್ಯಾಮೀನ್ ಹಾಗು ಯೂದ ಗೋತ್ರದ ಜನರ ಒಂದು ಗುಂಪು ದಾವೀದನು ವಾಸವಾಗಿದ್ದ ಕೋಟೆಯಬಳಿಗೆ ಹೋಯಿತು.</verse>
				<verse number="17">ದಾವೀದನು ಅವರನ್ನು ಎದುರುಗೊಂಡು “ಸ್ನೇಹಿತರಂತೆ ನನಗೆ ಸಹಾಯ ಮಾಡಲು ಬಂದಿದ್ದರೆ ನಿಮಗೆ ಇಲ್ಲಿ ಸ್ವಾಗತ. ನಮ್ಮೊಂದಿಗೆ ಸೇರಿಕೊಳ್ಳಿ, ನಾನು ನಿಮಗೆ ಯಾವ ತೊಂದರೆಯನ್ನು ಕೊಟ್ಟಿಲ್ಲ. ಆದರೆ ನೀವು ನನ್ನನ್ನು ನನ್ನ ವೈರಿಗಳಿಗೆ ಹಿಡಿದುಕೊಡಲು ಬಂದಿದ್ದರೆ ನಮ್ಮ ಪಿತೃಗಳ ದೇವರು ಅದನ್ನು ಬಲ್ಲವರಾಗಿದ್ದು ನಿಮ್ಮನ್ನು ದಂಡಿಸುವರು,” ಎಂದು ಹೇಳಿದನು.</verse>
				<verse number="18">ಆಗ ‘ಮೂವತ್ತು ಪ್ರಮುಖ’ರ ಪಡೆಯಲ್ಲಿ ಮುಖ್ಯಸ್ಥನಾದ ಅಮಾಸೈ ಆತ್ಮಾವೇಶವುಳ್ಳವನಾಗಿ ಹೀಗೆ ಕೂಗಿ ಹೇಳಿದನು: “ಜೆಸ್ಸೆಯ ಮಗ ದಾವೀದನಿಗೆ ಶುಭವಾಗಲಿ! ನಾವೆಲ್ಲರು ನಿಮ್ಮವರು; ನಿಮಗೂ ನಿಮ್ಮ ಸಹಾಯಕರಿಗೂ ಶುಭವಾಗಲಿ! ದೇವರು ನಿಮಗೆ ಜಯಪ್ರದರಾಗಿದ್ದಾರೆ.” ದಾವೀದ ಅವರನ್ನು ಸ್ವಾಗತಿಸಿ ತನ್ನ ಸೈನ್ಯದಲ್ಲಿ ಮುಖ್ಯಾಧಿಕಾರಿಗಳನ್ನಾಗಿ ನೇಮಿಸಿದನು.</verse>
				<verse number="19">ಅರಸ ಸೌಲನಿಗೆ ವಿರುದ್ಧ ಯುದ್ಧಮಾಡಲು ಫಿಲಿಷ್ಟಿಯರೊಂದಿಗೆ ಹೋಗುತ್ತಿದ್ದಾಗ ಮನಸ್ಸೆ ಗೋತ್ರದ ಕೆಲವು ಜನ ಸೈನಿಕರು ಬಂದು ದಾವೀದನ ಪಕ್ಷದಲ್ಲಿ ಸೇರಿಕೊಂಡರು. ದಾವೀದನು ನಿಜವಾಗಿಯೂ ಫಿಲಿಷ್ಟಿಯರಿಗೆ ಸಹಾಯಮಾಡಲಿಲ್ಲ. ತನ್ನ ಮೊದಲಿನ ಯಜಮಾನ ಸೌಲನಿಗೆ ತಮ್ಮನ್ನು ಹಿಡಿದುಕೊಡಬಹುದೆಂಬ ಭಯ ಫಿಲಿಷ್ಟಿಯ ರಾಜರುಗಳಿಗೆ ಇದ್ದುದರಿಂದ ಅವರು ಅವನನ್ನು ಚಿಕ್ಲಗಿಗೆ ಹಿಂದಕ್ಕೆ ಕಳುಹಿಸಿದರು.</verse>
				<verse number="20">ಹೀಗೆ ಅವನು ಹಿಂದಿರುಗುತ್ತಿದ್ದಾಗ ಅವನನ್ನು ಸೇರಿಕೊಂಡ ಮನಸ್ಸೆಗೋತ್ರದ ಸೈನಿಕರ ಹೆಸರುಗಳು ಇಂತಿವೆ: ಅದ್ನ, ಯೋಜಾಬಾದ್, ಎದೀಗಯೇಲ್, ಮೀಕಾಯೇಲ್, ಯೋಜಾಬಾದ್, ಎಲೀಹೂ ಹಾಗೂ ಚಿಲ್ಲೆತೈ. ಇವರೆಲ್ಲರೂ ಮನಸ್ಸೆ ಗೋತ್ರದಲ್ಲಿ ಸಹಸ್ರಾಧಿಪತಿಗಳಾಗಿದ್ದರು.</verse>
				<verse number="21">ಇವರು ಪ್ರಖ್ಯಾತ ಯುದ್ಧವೀರರಾಗಿದ್ದು ದಾವೀದನ ಸೇನಾಪಡೆಗಳ ಮುಖ್ಯಸ್ಥರಾಗಿ ಸೇವೆಸಲ್ಲಿಸಿದರು. ಅನಂತರ ಇಸ್ರಯೇಲಿನ ಸೇನೆಯಲ್ಲಿಯೂ ಮುಖ್ಯಸ್ಥರಾಗಿದ್ದರು.</verse>
				<verse number="22">ದಾವೀದನ ಸೈನ್ಯಕ್ಕೆ ಪ್ರತಿದಿನವೂ ಹೊಸಬರು ಬಂದು ಸೇರುತ್ತಾ ಇದ್ದುದರಿಂದ ಅವನ ಸೈನ್ಯವು ಸಂಖ್ಯೆಯಲ್ಲಿ ಅಧಿಕಾಧಿಕವಾಗಿ ಬೆಳೆಯಿತು.</verse>
				<verse number="23">ಸರ್ವೇಶ್ವರಸ್ವಾಮಿ ವಾಗ್ದಾನ ಮಾಡಿದಂತೆ ಸೌಲನಿಗೆ ಬದಲಾಗಿ ದಾವೀದನನ್ನು ಅರಸನನ್ನಾಗಿ ಮಾಡಲು, ಅನೇಕ ಸಿದ್ಧಸೈನಿಕರು ಹೆಬ್ರೋನಿಗೆ ಬಂದು ದಾವೀದನ ಸೈನ್ಯದಲ್ಲಿ ಸೇರಿದರು. ಅವರ ಸಂಖ್ಯೆಗಳು ಈ ಕೆಳಕಂಡಂತಿವೆ:</verse>
				<verse number="24">ಯೆಹೂದ: ಗುರಾಣಿ ಹಾಗೂ ಈಟಿಗಳನ್ನು ಹೊಂದಿದ 6,800 ಶಸ್ತ್ರಧಾರಿಗಳು;</verse>
				<verse number="25">ಸಿಮೆಯೋನ: ಚೆನ್ನಾಗಿ ತರಬೇತಿ ಹೊಂದಿದ 7,100 ರಣವೀರರು;</verse>
				<verse number="26">ಲೇವಿ: 4,600 ಸೈನಿಕರು;</verse>
				<verse number="27">ಯೆಹೋಯಾದಾವನೂ ಅವನ ಹಿಂಬಾಲಕರೂ ಆದ ಆರೋನನ ವಂಶಜರು -3,700 ಸೈನಿಕರು;</verse>
				<verse number="28">ಪರಾಕ್ರಮಶಾಲಿಯಾದ ಯುವಕ ಚಾದೋಕ ಮತ್ತು ಅವನ ಬಂಧುಗಳಾದ 22 ಮಂದಿ ಅಧಿಪತಿಗಳು;</verse>
				<verse number="29">ಸೌಲನ ಸಂಬಂಧಿಕರಾದ ಬೆನ್ಯಾಮೀನ್ ಗೋತ್ರದಿಂದ: 3,000 ಸೈನಿಕರು;</verse>
				<verse number="30">ಎಫ್ರಯಿಮ್ ಗೋತ್ರದಿಂದ: 20,800 ಮಹಾರಣವೀರರು;</verse>
				<verse number="31">ಪಶ್ಚಿಮದಲ್ಲಿ ಮನಸ್ಸೆ ಕುಲದಿಂದ 18,000 ಮಂದಿ ದಾವೀದನ ಪಟ್ಟಾಭಿಷೇಕದಲ್ಲಿ ಭಾಗಿಗಳಾಗಲು ಆಯ್ಕೆಯಾದವರು;</verse>
				<verse number="32">ಇಸ್ಸಾಕಾರ ಗೋತ್ರದಿಂದ: 200 ಜನ ನಾಯಕರು ಹಾಗೂ ಅವರೊಂದಿಗಿದ್ದ ಸೈನಿಕರು; (ಇಸ್ರಯೇಲರು ಏನು ಮಾಡಬೇಕು, ಅದನ್ನು ಮಾಡಲು ಯಾವುದು ಉತ್ತಮ ಸಮಯ ಎಂಬುದನ್ನು ಈ ನಾಯಕರು ತಿಳಿದಿದ್ದರು);</verse>
				<verse number="33">ಜೆಬೂಲೂನ್ಯರಿಂದ: ನಿಷ್ಠೆಯುಳ್ಳ, ನಂಬಿಗಸ್ಥ, ಯುದ್ಧಮಾಡಲು ಸಿದ್ಧರಾದ, ಎಲ್ಲಾ ರೀತಿಯ ಆಯುಧಗಳನ್ನು ಉಪಯೋಗಿಸಲು ತರಬೇತಿ ಹೊಂದಿದ 50,000 ವೀರರು;</verse>
				<verse number="34">ನಫ್ತಾಲಿಯವರಿಂದ: 1,000 ಮಂದಿ ನಾಯಕರು ಮತ್ತು ಅವರೊಂದಿಗೆ ಗುರಾಣಿ, ಈಟಿಗಳೊಂದಿಗೆ ಸಶಸ್ತ್ರರಾದ 37,000 ಸೈನಿಕರು.</verse>
				<verse number="35">ದಾನ್ಯರಿಂದ: 28,600 ಯುದ್ಧ ನಿಪುಣರು;</verse>
				<verse number="36">ಅಶೇರ್ಯರಿಂದ: 40,000 ಯುದ್ಧಸನ್ನದ್ಧರಾದ ವೀರರು;</verse>
				<verse number="37">ಜೋರ್ಡನ್ ಪೂರ್ವದಲ್ಲಿದ್ದ ಗೋತ್ರಗಳು - ರೂಬೇನ್, ಗಾದ್ ಮತ್ತು ಪೂರ್ವ ಮನಸ್ಸೆ: ಎಲ್ಲಾ ರೀತಿಯ ಆಯುಧಗಳನ್ನು ಪ್ರಯೋಗಿಸಲು ತರಬೇತಿ ಹೊಂದಿದ 120,000 ಪುರುಷರು.</verse>
				<verse number="38">ಯುದ್ಧಸನ್ನದ್ಧರಾದ ಈ ಎಲ್ಲಾ ಸೈನಿಕರು ಸಮಸ್ತ ಇಸ್ರಯೇಲರ ಮೇಲೆ ದಾವೀದನನ್ನು ಅರಸನನ್ನಾಗಿ ಮಾಡಲು ದೃಢನಿರ್ಧಾರ ಮಾಡಿಕೊಂಡು ಹೆಬ್ರೋನಿಗೆ ಹೋದರು. ಇಸ್ರಯೇಲರಲ್ಲಿ ಉಳಿದವರೆಲ್ಲರೂ ಇದೇ ಉದ್ದೇಶದಿಂದ ಒಂದಾಗಿದ್ದರು.</verse>
				<verse number="39">ಅವರುದಾವೀದನೊಂದಿಗೆ, ತಮ್ಮ ಸಹಬಾಂಧವರು ಸಿದ್ಧಪಡಿಸಿದ ಆಹಾರ ಪಾನೀಯಗಳನ್ನು ಸೇವಿಸುತ್ತಾ, ಮೂರು ದಿನಗಳನ್ನು ಕಳೆದರು.</verse>
				<verse number="40">ದೂರದ ಉತ್ತರದಲ್ಲಿದ್ದ ಇಸ್ಸಾಕಾರ್, ಜೆಬುಲೂನ್, ನಫ್ತಾಲಿ ಗೋತ್ರಗಳ ಜನರು ತಮ್ಮ ಎತ್ತು, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ರೊಟ್ಟಿ, ಅಂಜೂರ, ಒಣದ್ರಾಕ್ಷಿ, ದ್ರಾಕ್ಷಾರಸ, ಎಣ್ಣೆಗಳನ್ನು ಹೊತ್ತುತಂದರು. ಭೋಜನಕ್ಕೆ ಕುರಿದನಗಳನ್ನು ಸಹ ತೆಗೆದುಕೊಂಡು ಬಂದರು. ನಾಡಿನಲ್ಲೆಲ್ಲಾ ಸಂತೋಷ ಸಂಭ್ರಮವಿತ್ತು.</verse>
			</chapter>
			<chapter number="13">
				<verse number="1">ಅರಸ ದಾವೀದನು ಸರ್ವಸಹಸ್ರಾಧಿಪತಿಗಳೊಂದಿಗೂ ಶತಾಧಿಪತಿಗಳೊಂದಿಗೂ ಸಮಾಲೋಚನೆ ನಡೆಸಿದನು.</verse>
				<verse number="2">“ನೀವು ಎಲ್ಲರು ಸಮ್ಮತಿಸಿದರೆ, ಇದು ನಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಚಿತ್ತವಾಗಿದ್ದರೆ, ಇಲ್ಲಿ ನಮ್ಮೊಂದಿಗೆ ಶೀಘ್ರವಾಗಿ ಬಂದು ಸೇರಬೇಕೆಂದು ಉಳಿದ ಎಲ್ಲಾ ನಮ್ಮ ದೇಶಬಾಂಧವರಿಗೆ, ಯಾಜಕ-ಲೇವಿಯರಿಗೆ ಹಾಗು ಅವರ ಪಟ್ಟಣಗಳಿಗೆ ಸಂದೇಶವನ್ನು ಕಳುಹಿಸೋಣ.</verse>
				<verse number="3">ಅನಂತರ ನಾವು ಹೋಗಿ ಅರಸ ಸೌಲ ನಿರ್ಲಕ್ಷಿಸಿದ್ದ ದೇವಮಂಜೂಷವನ್ನು ತೆಗೆದುಕೊಂಡು ಬರೋಣ,” ಎಂದು ಜನರೆಲ್ಲರಿಗೆ ಸಲಹೆ ಮಾಡಿದನು.</verse>
				<verse number="4">ಈ ಸಲಹೆಯನ್ನು ಸರ್ವರೂ ಮೆಚ್ಚಿ ಅನುಮೋದಿಸಿದರು.</verse>
				<verse number="5">ಹೀಗೆ ಅರಸ ದಾವೀದನು ಕಿರ್ಯತ್ಯಾರೀಮಿನಿಂದ ಜೆರುಸಲೇಮಿಗೆ ದೇವಮಂಜೂಷವನ್ನು ತರಲು ದೇಶದ ಎಲ್ಲಾ ಕಡೆಗಳಿಂದಲೂ, ದಕ್ಷಿಣದ ಈಜಿಪ್ಟ್ ಗಡಿಯಿಂದ ಉತ್ತರದ ಹಾಮಾತ್ ಕಣಿವೆಯವರೆಗಿನ ಜನರನ್ನು ಒಂದುಗೂಡಿಸಿದನು.</verse>
				<verse number="6">ದಾವೀದನೂ ಜನರೂ ಜುದೇಯದಲ್ಲಿ ‘ಬಾಳಾ’ ಎಂದು ಹೆಸರುಗೊಂಡಿದ್ದ ಕಿರ್ಯತ್ಯಾರೀಮ ಪಟ್ಟಣಕ್ಕೆ ಮಂಜೂಷವನ್ನು ತರಲು ಹೋದರು. ಆ ಮಂಜೂಷವು ಕೆರೂಬಿಯರ ನಡುವೆ ಆಸೀನರಾಗಿರುವ ಸರ್ವೇಶ ದೇವರ ನಾಮದಿಂದ ಸುಪ್ರಸಿದ್ಧವಾಗಿತ್ತು.</verse>
				<verse number="7">ಅಬೀನಾದಾಬಿನ ಮನೆಯಿಂದ ಆ ದೇವಮಂಜೂಷವನ್ನು ಹೊರಗೆ ತಂದು, ಒಂದು ಹೊಸ ಎತ್ತಿನ ಬಂಡಿಯ ಮೇಲಿಟ್ಟರು. ಉಜ್ಜನೂ ಅಹಿಯೋವನೂ ಬಂಡಿಯನ್ನು ನಡೆಸುತ್ತಿದ್ದರು.</verse>
				<verse number="8">ದಾವೀದನೂ ಎಲ್ಲಾ ಜನರೂ ಕಿನ್ನರಿ, ಸ್ವರಮಂಡಲ, ತಮಟೆ, ತಾಳ, ತುತೂರಿ ಮುಂತಾದ ವಾದ್ಯಗಳನ್ನು ಬಾರಿಸುತ್ತಾ ಪೂರ್ಣಶಕ್ತಿಯಿಂದ ಹಾಡುತ್ತಾ ದೇವರ ಮುಂದೆ ನರ್ತಿಸುತ್ತಾ ನಡೆದರು.</verse>
				<verse number="9">ಕೀದೋನ್ ಎಂಬಲ್ಲಿ ಕಾಳುತೂರುವ ಕಣಕ್ಕೆ ಬಂದಾಗ ಎತ್ತುಗಳು ಎಡವಿದವು. ಆಗ ಉಜ್ಜನು ತನ್ನ ಕೈಗಳನ್ನು ಚಾಚಿ ದೇವಮಂಜೂಷವನ್ನು ಹಿಡಿದುಕೊಂಡನು.</verse>
				<verse number="10">ಮಂಜೂಷವನ್ನು ಮುಟ್ಟಿದ್ದಕ್ಕಾಗಿ ಕೂಡಲೇ ಸರ್ವೇಶ್ವರ ಉಜ್ಜನ ಮೇಲೆ ಉಗ್ರಕೋಪ ತಾಳಿ ಅವನನ್ನು ಕೊಂದುಹಾಕಿದರು. ದೇವರ ಸನ್ನಿಧಿಯಲ್ಲಿಯೇ ಅವನು ಮರಣ ಹೊಂದಿದನು.</verse>
				<verse number="11">ಆ ಸ್ಥಳಕ್ಕೆ ಅಂದಿನಿಂದ ‘ಪೆರೆಚ್ ಉಜ್ಜ’ ಎಂಬ ಹೆಸರು ಬಂತು. ಸರ್ವೇಶ್ವರ ಕೋಪದಿಂದ ಉಜ್ಜನನ್ನು ಶಿಕ್ಷಿಸಿದ್ದಕ್ಕಾಗಿ ದಾವೀದನು ಭಯದಿಂದ ಕಂಗೆಟ್ಟನು.</verse>
				<verse number="12">ಸರ್ವೇಶ್ವರನ ಭಯದಿಂದ ದಾವೀದನು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ಈಗ ಹೇಗೆ ತಾನೆ ತೆಗೆದುಕೊಂಡು ಹೋಗಲಿ?” ಎಂದು ಕಳವಳಪಟ್ಟನು.</verse>
				<verse number="13">ಅದನ್ನು ಜೆರುಸಲೇಮಿಗೆ ತನ್ನೊಂದಿಗೆ ತೆಗೆದುಕೊಂಡು ಹೋಗಲಿಲ್ಲ. ಗತ್ ಊರಿನ ನಿವಾಸಿ ಓಬೇದೆದೋಮನ ಮನೆಯಲ್ಲಿ ಅದನ್ನು ಇರಿಸಿದನು.</verse>
				<verse number="14">ಅದು ಅಲ್ಲಿ ಮೂರು ತಿಂಗಳು ಇತ್ತು. ಸರ್ವೇಶ್ವರ ಆ ಅವಧಿಯಲ್ಲಿ ಓಬೇದೆದೋಮನ ಕುಟುಂಬವನ್ನೂ ಅವನಿಗೆ ಇದ್ದುದೆಲ್ಲವನ್ನೂ ಆಶೀರ್ವದಿಸಿದರು.</verse>
			</chapter>
			<chapter number="14">
				<verse number="1">ಟೈರಿನ ಅರಸ ಹೀರಾಮನು ದಾವೀದನ ಬಳಿಗೆ ತನ್ನ ವಾಣಿಜ್ಯ ನಿಯೋಗವನ್ನು ಕಳುಹಿಸಿದನು. ಅರಮನೆಯನ್ನು ಕಟ್ಟಲು ಅವನಿಗೆ ದೇವದಾರು ಮರದ ದಿಮ್ಮಿಗಳನ್ನು, ಶಿಲ್ಪಿಗಳನ್ನು ಹಾಗು ಬಡಗಿಯವರನ್ನು ಕಳುಹಿಸಿಕೊಟ್ಟನು.</verse>
				<verse number="2">ಹೀಗೆ ದಾವೀದನು ದೇವಪ್ರಜೆಗಳಾದ ಇಸ್ರಯೇಲರ ನಿಮಿತ್ತ ತನ್ನ ರಾಜ್ಯವನ್ನು ಉನ್ನತ ಸ್ಥಾನಕ್ಕೇರಿಸಿ ತನ್ನನ್ನು ಇಸ್ರಯೇಲ್ ರಾಜನನ್ನಾಗಿ ಸ್ಥಿರಪಡಿಸುವರೆಂದು ತಿಳಿದುಕೊಂಡನು.</verse>
				<verse number="3">ಜೆರುಸಲೇಮಿನಲ್ಲೂ ದಾವೀದನು ಹಲವು ಮಹಿಳೆಯರನ್ನು ವಿವಾಹವಾಗಿ ಇನ್ನೂ ಕೆಲವು ಮಂದಿ ಗಂಡು ಮಕ್ಕಳನ್ನೂ ಹೆಣ್ಣು ಮಕ್ಕಳನ್ನೂ ಪಡೆದನು.</verse>
				<verse number="4">ಜೆರುಸಲೇಮಿನಲ್ಲಿ ಅವನಿಗೆ ಹುಟ್ಟಿದ ಗಂಡು ಮಕ್ಕಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,</verse>
				<verse number="5">ಇಬ್ಹಾರ್, ಎಲೀಷೂವ, ಎಲ್ಪೆಲೆಟ್,</verse>
				<verse number="6">ನೋಗಹ, ನೆಫೆಗ್, ಯಾಫೀಯ,</verse>
				<verse number="7">ಎಲೀಷಾಮ, ಬೇಲ್ಯಾದ ಹಾಗು ಎಲೀಫೆಲೆಟ್ ಎಂಬವರು.</verse>
				<verse number="8">ದಾವೀದನು ಇಸ್ರಯೇಲರೆಲ್ಲರ ಇಡೀ ನಾಡಿಗೆ ಅರಸನಾಗಿ ಅಭಿಷಿಕ್ತನಾಗಿದ್ದಾನೆಂಬ ವರ್ತಮಾನವನ್ನು ಫಿಲಿಷ್ಟಿಯರು ಕೇಳಿದರು. ಅವನನ್ನು ಸೆರೆಹಿಡಿಯಲು ತಮ್ಮ ಸೈನ್ಯವನ್ನು ಕಳುಹಿಸಿದರು. ದಾವೀದನು ಅವರನ್ನು ಎದುರಿಸಲು ಸಿದ್ಧನಾದನು.</verse>
				<verse number="9">ಫಿಲಿಷ್ಟಿಯರು ರೆಫಾಯಿಮ್ ಕಣಿವೆಯನ್ನು ತಲುಪಿ ಸುಲಿಗೆಮಾಡಲು ಪ್ರಾರಂಭಿಸಿದರು.</verse>
				<verse number="10">“ಫಿಲಿಷ್ಟಿಯರ ಮೇಲೆ ನಾನು ದಾಳಿಮಾಡಬಹುದೊ? ನೀವು ನನಗೆ ಜಯವನ್ನು ಕೊಡುವಿರೋ\, ಎಂದು ದಾವೀದನು ದೇವರಾದ ಸರ್ವೇಶ್ವರನನ್ನು ಪ್ರಾರ್ಥಿಸಿದನು. “ಹೌದು, ಅವರನ್ನು ಎದುರಿಸು, ನಾನು ನಿನಗೆ ಜಯವನ್ನು ಕೊಡುವೆನು,” ಎಂದು ಸರ್ವೇಶ್ವರ ಉತ್ತರಕೊಟ್ಟರು.</verse>
				<verse number="11">ಹೀಗೆ ದಾವೀದ ಬಾಳ್ ಪೆರಾಚೀಮ್ ಎಂಬಲ್ಲಿ ಅವರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. “ಕಟ್ಟೆಯೊಡೆದ ಪ್ರವಾಹದಂತೆ ನುಗ್ಗಿ, ವೈರಿಸೈನ್ಯವನ್ನು ನಾಶಮಾಡಲು ಸರ್ವೇಶ್ವರ ನನ್ನನ್ನು ಉಪಯೋಗಿಸಿದ್ದಾರೆ,” ಎಂದು ಹೇಳಿದನು. ಈ ಕಾರಣ ಆ ಸ್ಥಳಕ್ಕೆ ‘ಬಾಳ್ ಪೆರಾಚೀಮ್’ ಎಂಬ ಹೆಸರು ಬಂದಿತು.</verse>
				<verse number="12">ಫಿಲಿಷ್ಟಿಯರು ತಲೆ ತಪ್ಪಿಸಿಕೊಂಡು ಓಡಿಹೋಗುವಾಗ ತಮ್ಮ ವಿಗ್ರಹಗಳನ್ನು ಅಲ್ಲೇ ಬಿಟ್ಟುಹೋದರು. ಅವೆಲ್ಲವನ್ನು ಸುಟ್ಟುಹಾಕಬೇಕೆಂದು ದಾವೀದನು ಅಪ್ಪಣೆಮಾಡಿದನು.</verse>
				<verse number="13">ಸ್ವಲ್ಪವೇ ಸಮಯದ ನಂತರ ಫಿಲಿಷ್ಟಿಯರು ಪುನಃ ಬಂದು ಕಣಿವೆಯಲ್ಲಿ ಕೊಳ್ಳೆ ಹೊಡೆಯಲು ಪ್ರಾರಂಭಿಸಿದರು.</verse>
				<verse number="14">ದಾವೀದನು ಮತ್ತೊಮ್ಮೆ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಿದನು. “ನೀನು ಅವರನ್ನು ಬೆನ್ನಟ್ಟಬೇಡ, ಸುತ್ತಿಕೊಂಡು ಹೋಗಿ ಬಾಕಾಮರಗಳಿರುವ ಆಚೆಕಡೆಯಿಂದ ಅವರ ಮೇಲೆ ದಾಳಿಮಾಡು.</verse>
				<verse number="15">ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳುವಾಗ, ದೇವರು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕಾಗಿ ನನಗೆ ಮುಂದಾಗಿ ಹೊರಟಿದ್ದಾರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದು ಸರ್ವೇಶ್ವರ ಉತ್ತರಕೊಟ್ಟರು.</verse>
				<verse number="16">ಸರ್ವೇಶ್ವರ ಹೇಳಿದಂತೆಯೇ ದಾವೀದನು ಮಾಡಿದನು. ಫಿಲಿಷ್ಟಿಯರನ್ನು ಗಿಬ್ಯೋನಿನಿಂದ ಗೆಜೆರಿನವರೆಗೂ ಹಿಮ್ಮೆಟ್ಟಿದನು.</verse>
				<verse number="17">ದಾವೀದನ ಹೆಸರು ಎಲ್ಲಾ ಕಡೆಗಳಲ್ಲಿ ಪ್ರಖ್ಯಾತಿಗೆ ಬಂದಿತು; ಎಲ್ಲಾ ದೇಶಗಳವರೂ ದಾವೀದನಿಗೆ ಭಯಪಡುವಂತೆ ಸರ್ವೇಶ್ವರ ಮಾಡಿದರು.</verse>
			</chapter>
			<chapter number="15">
				<verse number="1">ದಾವೀದ ನಗರದಲ್ಲಿ ದಾವೀದನು ತನ್ನ ವೈಯಕ್ತಿಕ ಉಪಯೋಗಕ್ಕಾಗಿ ಮನೆಗಳನ್ನು ಕಟ್ಟಿಸಿಕೊಂಡನು. ದೇವಮಂಜೂಷಕ್ಕೂ ಒಂದು ಸ್ಥಳವನ್ನು ಸಿದ್ಧಪಡಿಸಿ ಅದಕ್ಕೆ ಒಂದು ಗುಡಾರವನ್ನು ಹಾಕಿಸಿದನು.</verse>
				<verse number="2">‘ಲೇವಿಯರು ಮಾತ್ರವೇ ದೇವಮಂಜೂಷವನ್ನು ಹೊರಬೇಕು. ಏಕೆಂದರೆ ಸದಾಕಾಲ ತಮ್ಮ ಸೇವೆಮಾಡುವುದಕ್ಕೂ ಮಂಜೂಷವನ್ನು ಹೊರುವುದಕ್ಕೂ ಸರ್ವೇಶ್ವರನಿಂದ ಆಯ್ಕೆಯಾದವರು ಅವರೇ’ ಎಂದು ನಿಶ್ಚಯಿಸಿಕೊಂಡನು.</verse>
				<verse number="3">ತಾನು ಸಿದ್ಧಪಡಿಸಿದ ಸ್ಥಳಕ್ಕೆ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ಎಲ್ಲಾ ಇಸ್ರಯೇಲರನ್ನು ಜೆರುಸಲೇಮಿಗೆ ಬರಮಾಡಿಕೊಂಡನು.</verse>
				<verse number="4">ಅನಂತರ ಆರೋನನ ಸಂತತಿಯವರನ್ನೂ ಲೇವಿಯರನ್ನೂ ಕರೆಯಿಸಿದನು.</verse>
				<verse number="5">ಅಂತೆಯೇ, ಲೇವಿಯರಲ್ಲಿ ಕೇಹತನ ಊರಿಯೇಲನೆಂಬ ಮೇಲ್ವಿಚಾರಕನು ತನ್ನ ಕುಲದ ನೂರಿಪ್ಪತ್ತು ಸದಸ್ಯರೊಂದಿಗೆ ಬಂದನು.</verse>
				<verse number="6">ಮೆರಾರೀ ಗೋತ್ರದಿಂದ ಮೇಲ್ವಿಚಾರಕ ಅಸಾಯನು ಇನ್ನೂರ ಇಪ್ಪತ್ತು ಜನರೊಂದಿಗೆ ಬಂದನು;</verse>
				<verse number="7">ಗೇರ್ಷೋನ್ ಗೋತ್ರದಿಂದ ಮೇಲ್ವಿಚಾರಕ ಯೋವೇಲ ನೂರ ಮೂವತ್ತು ಜನರೊಂದಿಗೆ ಬಂದನು;</verse>
				<verse number="8">ಎಲೀಚಾಫನ್ಯ ಗೋತ್ರದಿಂದ ಮೇಲ್ವಿಚಾರಕ ಶೆಮಾಯ ಇನ್ನೂರು ಜನರೊಂದಿಗೆ ಬಂದನು;</verse>
				<verse number="9">ಹೆಬ್ರೋನ್ ಗೋತ್ರದಿಂದ ಮೇಲ್ವಿಚಾರಕ ಎಲೀಯೋಲನು ಎಂಬತ್ತು ಜನರೊಂದಿಗೆ ಬಂದನು.</verse>
				<verse number="10">ಉಜ್ಜೀಯೇಲನ ಗೋತ್ರದಿಂದ ಮೇಲ್ವಿಚಾರಕ ಅಮ್ಮೀನಾದಾಬ ನೂರಹನ್ನೆರಡು ಜನರೊಂದಿಗೆ ಬಂದನು.</verse>
				<verse number="11">ದಾವೀದನು ಯಾಜಕರಾದ ಚಾದೋಕ್ ಹಾಗು ಎಬ್ಯಾತಾರರೆಂಬುವರನ್ನು ಕರೆಯಿಸಿದನು; ಅಂತೆಯೇ ಲೇವಿಯರಾದ ಊರಿಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೋಲ್ ಮತ್ತು ಅಮ್ಮೀನಾದಾಬ್ ಎಂಬವರನ್ನೂ ಕರೆಯಿಸಿದನು.</verse>
				<verse number="12">“ನೀವು ಲೇವಿಯರ ಗೋತ್ರಗಳ ನಾಯಕರು; ನಾನು ಸಿದ್ಧಪಡಿಸಿದ ಸ್ಥಳಕ್ಕೆ ಇಸ್ರಯೇಲರ ದೇವರಾದ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ನೀವು ಹಾಗು ನಿಮ್ಮ ಜೊತೆಯಲ್ಲಿ ಲೇವಿಯರೂ ನಿಮ್ಮನ್ನೇ ಶುದ್ಧಪಡಿಸಿಕೊಳ್ಳಿರಿ.</verse>
				<verse number="13">ಮೊದಲೊಂದು ಸಾರಿ, ಅದನ್ನು ತರಲು ನೀವು ಇಲ್ಲದೇ ಹೋದುದರಿಂದ ಹಾಗು ನಾವು ತಕ್ಕ ರೀತಿಯಲ್ಲಿ ಅವರನ್ನು ಆರಾಧಿಸದೇ ಹೋದುದಕ್ಕಾಗಿ ನಮ್ಮ ದೇವರಾದ ಸರ್ವೇಶ್ವರ ನಮ್ಮನ್ನು ಶಿಕ್ಷಿಸಿದರು,” ಎಂದು ಅವರನ್ನು ಎಚ್ಚರಿಸಿದನು.</verse>
				<verse number="14">ಆಗ ಯಾಜಕರೂ ಲೇವಿಯರೂ ಇಸ್ರಯೇಲರ ದೇವರಾದ ಸರ್ವೇಶ್ವರನ ಮಂಜೂಷವನ್ನು ತರುವುದಕ್ಕಾಗಿ ತಮ್ಮನ್ನೇ ಶುದ್ಧೀಕರಿಸಿಕೊಂಡರು.</verse>
				<verse number="15">ಲೇವಿಯರು ಅದನ್ನು ಗುದಿಗೆಗಳ ಮೇಲಿಟ್ಟು, ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ, ತಮ್ಮ ಹೆಗಲಮೇಲೆ ಹೊತ್ತುಕೊಂಡು ನಡೆದರು.</verse>
				<verse number="16">ಸ್ವರಮಂಡಲ, ಕಿನ್ನರಿ, ತಾಳಗಳೊಂದಿಗೆ ಸಂಭ್ರಮದಿಂದ ವಾದ್ಯಗಳನ್ನು ಬಾರಿಸುವುದಕ್ಕೂ ಹಾಡುವುದಕ್ಕೂ ವಿವಿಧ ಲೇವಿಯರನ್ನು ನೇಮಿಸಬೇಕೆಂದು ದಾವೀದನು ಲೇವಿಯರ ನಾಯಕನಿಗೆ ಆಜ್ಞಾಪಿಸಿದನು.</verse>
				<verse number="17">ಗಾಯಕರ ಮಂಡಳಿಯಿಂದ ಕಂಚಿನ ತಾಳಗಳನ್ನು ಬಾರಿಸಲು ಆಯ್ಕೆಹೊಂದಿದವರು: ಯೋವೇಲನ ಮಗ ಹೇಮಾನ್, ಅವನ ಬಂಧು ಬೆರೆಕ್ಯನ ಮಗ ಆಸಾಫ್, ಮೆರಾರೀ ಕುಟುಂಬಕ್ಕೆ ಸೇರಿದ ಕೂಷಾಯನ ಮಗ ಏತಾನ್ ಎಂಬವರು. ತಮಗೆ ಸಹಾಯ ಮಾಡಲು ತಾರಸ್ಥಾಯಿಯ ತಂತಿವಾದ್ಯಗಳನ್ನು ಬಾರಿಸಲು ಜೆಕರ್ಯ, ಬೇನ್, ಯಾಜೀಯೇಲ್, ಶಮೀರಾಮೋತ್, ಯೆಹೀಯೇಲ್, ಉನ್ನೀ, ಎಲೀಯಾಬ್, ಬೆನಾಯ ಹಾಗು ಮಸೇಯ ಎಂಬವರನ್ನು ಆರಿಸಿಕೊಂಡರು. ಮಂದ್ರಸ್ಥಾಯಿಯ ಕಿನ್ನರಿಗಳನ್ನು ಬಾರಿಸಲು ಮತಿತ್ಯ, ಎಲೀಫೆಲೇಹು, ಮಿಕ್ನೇಯ, ದೇವಾಲಯದ ದ್ವಾರಪಾಲಕರಾದ ಓಬೇದೆದೋಮ್ ಮತ್ತು ಯೆಗೀಯೇಲರನ್ನೂ ನೇಮಿಸಿಕೊಂಡರು.</verse>
				<verse number="18"></verse>
				<verse number="19"></verse>
				<verse number="20"></verse>
				<verse number="21"></verse>
				<verse number="22">ಸಂಗೀತದಲ್ಲಿ ಪರಿಣತನಾದ ಕೆನನ್ಯ, ಲೇವಿಯರ ವಾದ್ಯವೃಂದಕ್ಕೆ ಮುಖ್ಯಸ್ಥನಾಗಿ ನೇಮಕಗೊಂಡನು.</verse>
				<verse number="23">ಬೆರಕ್ಕ ಹಾಗು ಎಲ್ಕಾನ ಎಂಬವರು ಓಬೇದೆದೋಮ್ ಮತ್ತು ಯೆಹೀಯರೊಂದಿಗೆ ಮಂಜೂಷದ ಕಾವಲುಗಾರರಾಗಿ ನೇಮಕವಾದರು. ಯಾಜಕರಾದ ಶೆಬನ್ಯ, ಯೋಷಾಫಾಟ್, ನೆತನೇಲ್, ಅಮಾಸೈ, ಜೆಕರ್ಯ, ಬೆನಾಯ ಹಾಗು ಎಲೀಯೆಜೆರ್ ಎಂಬವರು ಮಂಜೂಷದ ಮುಂದೆ ತುತ್ತೂರಿಗಳನ್ನು ಊದಲು ಆಯ್ಕೆಯಾದರು.</verse>
				<verse number="24"></verse>
				<verse number="25">ಹೀಗೆ ಅರಸ ದಾವೀದನು, ಇಸ್ರಯೇಲಿನ ನಾಯಕರು ಹಾಗು ಸೈನ್ಯದ ಅಧಿಕಾರಿಗಳು ನಿಬಂಧನ ಮಂಜೂಷವನ್ನು ತರಲು ಓಬೇದೆದೋಮನ ಮನೆಗೆ ಹೋದರು. ಇದನ್ನು ಒಂದು ದೊಡ್ಡ ಜಾತ್ರೆಯಂತೆಯೇ ಆಚರಿಸಲಾಯಿತು.</verse>
				<verse number="26">ಮಂಜೂಷವನ್ನು ಹೊತ್ತುಕೊಂಡು ಬರುತ್ತಿದ್ದ ಲೇವಿಯರಿಗೆ ದೇವರ ಸಹಾಯ ದೊರೆತುದರಿಂದ ಅವರು ಏಳು ಹೋರಿಗಳನ್ನೂ ಏಳು ಕುರಿಗಳನ್ನೂ ಬಲಿದಾನ ಮಾಡಿದರು.</verse>
				<verse number="27">ದಾವೀದನು, ಮಂಜೂಷ ಹೊತ್ತವರು, ವಾದ್ಯ ಬಾರಿಸುವವರು ಹಾಗು ಅವರ ನಾಯಕ ಕೆನನ್ಯನು ಅತ್ಯುತ್ತಮ ನೂಲಿನಿಂದ ತಯಾರಿಸಿದ ನಿಲುವಂಗಿಗಳನ್ನು ಧರಿಸಿದ್ದರು. ದಾವೀದನು ಏಫೋದನ್ನು ಕೂಡ ಧರಿಸಿಕೊಂಡಿದ್ದನು.</verse>
				<verse number="28">ಹೀಗೆ ಎಲ್ಲಾ ಇಸ್ರಯೇಲರು ಜೆರುಸಲೇಮಿನವರೆಗೆ ಆನಂದಘೋಷಣೆಗಳಿಂದಲೂ ತುತೂರಿ, ಕೊಂಬು, ತಾಳ, ತಂತಿ, ವಾದ್ಯಗಳ ಸಂಗೀತದಿಂದಲೂ ಸರ್ವೇಶ್ವರನ ನಿಬಂಧನಾ ಮಂಜೂಷವನ್ನು ಹೊತ್ತುತಂದರು.</verse>
				<verse number="29">ಆ ಮಂಜೂಷ ಪಟ್ಟಣದೊಳಗೆ ಬರುತ್ತಿದ್ದಂತೆ ಸೌಲನ ಮಗಳಾದ ಮೀಕಲಳು ಕಿಟಕಿಯಿಂದ ಇಣಿಕಿ ನೋಡಿದಳು. ದಾವೀದನು ಸಂತೋಷದಿಂದ ಕುಣಿಯುತ್ತಾ ನರ್ತಿಸುತ್ತಾ ಇದ್ದುದನ್ನು ಕಂಡಳು. ಅದನ್ನು ನೋಡಿ ಅವನ ಬಗ್ಗೆ ಅವಳಲ್ಲಿ ತಿರಸ್ಕಾರ ಭಾವ ಮೂಡಿತು.</verse>
			</chapter>
			<chapter number="16">
				<verse number="1">ಅವರು ದೇವಮಂಜೂಷವನ್ನು ತಂದು ದಾವೀದನು ಅದಕ್ಕಾಗಿ ಸಿದ್ಧಪಡಿಸಿದ್ದ ಗುಡಾರದೊಳಗೆ ಒಯ್ದು, ಅಲ್ಲಿ ಅದನ್ನು ಸ್ಥಾಪಿಸಿದರು. ದೇವರಿಗೆ ದಹನಬಲಿಗಳನ್ನೂ, ಶಾಂತಿಸಮಾಧಾನದ ಬಲಿಗಳನ್ನೂ ಸಮರ್ಪಿಸಿದರು.</verse>
				<verse number="2">ಬಲಿಹೋಮಗಳ ಅರ್ಪಣೆ ಮುಗಿದ ತರುವಾಯ ದಾವೀದನು ಸರ್ವೇಶ್ವರನ ಹೆಸರಿನಲ್ಲಿ ಜನರನ್ನು ಆಶೀರ್ವದಿಸಿದನು. ಅವರೆಲ್ಲರಿಗೂ ಪ್ರಸಾದವನ್ನು ಹಂಚಿದನು:</verse>
				<verse number="3">ಇಸ್ರಯೇಲಿನ ಪ್ರತಿ ಒಬ್ಬ ಪುರುಷನಿಗೂ ಸ್ತ್ರೀಗೂ ಒಂದೊಂದು ರೊಟ್ಟಿಯನ್ನೂ ಬೇಯಿಸಿದ ಒಂದು ತುಂಡುಮಾಂಸವನ್ನೂ ಒಣಗಿದ ದ್ರಾಕ್ಷೆಗಳನ್ನೂ ಹಂಚಿದನು</verse>
				<verse number="4">ಸರ್ವೇಶ್ವರನ ಮಂಜೂಷದ ಮುಂದೆ ದೇವರ ಆರಾಧನೆ ಮಾಡುವುದಕ್ಕಾಗಿ ದಾವೀದನು ಕೆಲವು ಮಂದಿ ಲೇವಿಯರನ್ನು ನೇಮಿಸಿದನು.</verse>
				<verse number="5">ಅವರಲ್ಲಿ ಆಸಾಫನು ಮುಖ್ಯಸ್ಥನಾಗಿಯೂ ಜೆಕರ್ಯ ಅವನ ಸಹಾಯಕನಾಗಿಯೂ ನೇಮಕಗೊಂಡರು. ಯೇಗೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್ ಹಾಗು ಯೆಗೀಯೇಲ್ ಸ್ವರಮಂಡಲಗಳನ್ನು ಬಾರಿಸಲು ನೇಮಕವಾದರು. ಆಸಾಫನು ತಾಳಗಳನ್ನು ಬಾರಿಸಬೇಕಾಗಿತ್ತು.</verse>
				<verse number="6">ಬೆನಾಯ ಹಾಗೂ ಯಹಜೀಯೇಲ್ ಎಂಬ ಯಾಜಕರು ನಿಬಂಧನಾ ಮಂಜೂಷದ ಮುಂದೆ ಕ್ರಮವಾಗಿ ತುತೂರಿಗಳನ್ನು ಊದಬೇಕಾಗಿತ್ತು.</verse>
				<verse number="7">ಆಸಾಫನಿಗೂ ಅವನ ಜೊತೆ ಲೇವಿಯರಿಗೂ ಸರ್ವೇಶ್ವರನ ಸ್ತೋತ್ರ ಗೀತೆ ಹಾಡಲು ದಾವೀದನು ಪ್ರಥಮವಾಗಿ ಆ ದಿನದಲ್ಲೇ ನೇಮಿಸಿದನು. ಅವರು ಹೀಗೆಂದು ಹಾಡಿದರು:</verse>
				<verse number="8">ಸಲ್ಲಿಸಿ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರವನು I ಮಾಡಿರಿ ಆತನ ನಾಮಸ್ಮರಣೆಯನು I ಸಾರಿರಿ ಜಗಕೆ ಆತನ ಸತ್ಕಾರ್ಯಗಳನು II</verse>
				<verse number="9">ಹಾಡಿ ಪಾಡಿ ಹೊಗಳಿರಿ ಆತನನು I ಧ್ಯಾನಿಸಿ ಆತನ ಪವಾಡಗಳನು II</verse>
				<verse number="10">ಹೆಮ್ಮೆಪಡಿ, ನೆನೆದು ಆತನ ಶ್ರೀನಾಮವನು I ಹಿಗ್ಗಲಿ ಹೃದಯ, ಕೋರಿ ಆತನ ದರ್ಶನವನು II</verse>
				<verse number="11">ಆಶ್ರಯಿಸಿರಿ ಸರ್ವೇಶನನೂ ಆತನ ಶಕ್ತಿಯನೂ I ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು II</verse>
				<verse number="12">ಆತನ ದಾಸ ಇಸ್ರಯೇಲನ ಸಂತತಿಯವರೇ I ಆತನಾರಿಸಿಕೊಂಡ ಯಕೋಬನ ವಂಶದವರೇ II</verse>
				<verse number="13">ನೆನೆಯಿರಿ ಆತನ ಅದ್ಭುತಗಳನು, ಮಹತ್ಕಾರ್ಯಗಳನು I ಆತನ ವದನ ವಿಧಿಸಿದ ನ್ಯಾಯನಿರ್ಣಯಗಳನು II</verse>
				<verse number="14">ಸರ್ವೇಶ ನಮ್ಮ ದೇವನೆಂಬುದು ಪ್ರಕಟಿತ I ಆತನಿತ್ತ ತೀರ್ಪು ವಿಶ್ವವ್ಯಾಪ್ತ II</verse>
				<verse number="15">ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು I ಸಾವಿರಾರು ತಲೆಗಳವರೆಗೂ ತನ್ನೊಪ್ಪಂದವನು II</verse>
				<verse number="16">ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು I ಇಸಾಕನಿಗೆ ಆಣೆಯಿಟ್ಟು ಆತನು ಹೇಳಿದುದನು II</verse>
				<verse number="17">ಯಕೋಬನಿಗೆ ರಾಜಶಾಸನವಾಗಿ ಕೊಟ್ಟದ್ದನು I ಇಸ್ರಯೇಲಿಗೆ ಶಾಶ್ವತವಾಗಿತ್ತ ಈ ಮಾತನು: II</verse>
				<verse number="18">“ನಾ ಕೊಡುವೆನು ಕಾನಾನ್ ನಾಡನು ನಿಮಗೆ I ಸ್ವಾಸ್ತ್ಯವಾಗುವುದಿದು ನಿಮ್ಮ ಸಂತತಿಗೆ” II</verse>
				<verse number="19">ಅಲ್ಪಸಂಖ್ಯಾತರೂ ಆಗಂತುಕರೂ ಅವರಾಗಿರಲು I ನಾಡಿಂದ ನಾಡಿಗೆ ರಾಜ್ಯದಿಂದ ರಾಜ್ಯಕ್ಕೆ ಅಲೆಯುತ್ತಿರಲು II</verse>
				<verse number="20"></verse>
				<verse number="21">ಅವರಿಗಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ I ಅವರಿಗಾಗಿ ಅರಸರನ್ನಾತ ಗದರಿಸದೆ ಬಿಡಲಿಲ್ಲ II</verse>
				<verse number="22">“ನಾನು ಅಭಿಷೇಕಿಸಿದವರನು ಇಗೋ, ಮುಟ್ಟಬೇಡಿ I ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿ” II</verse>
				<verse number="23">ಸರ್ವ ಭೂನಿವಾಸಿಗಳೇ, ಸರ್ವೇಶ್ವರನಿಗೆ ಹಾಡಿರಿ I ಆತನ ಮುಕ್ತಿಮಾರ್ಗವನು ಪ್ರತಿನಿತ್ಯವೂ ಸಾರಿರಿ II</verse>
				<verse number="24">ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ I ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ II</verse>
				<verse number="25">ಏಕೆನೆ, ಮಹಾತ್ಮನು ಸರ್ವೇಶ್ವರ ಅತಿ ಸ್ತುತ್ಯರ್ಹನು I ಸಕಲ ದೇವರುಗಳಿಗಿಂತಲೂ ಘನಗಂಭೀರನು II</verse>
				<verse number="26">ಶೂನ್ಯ ಪ್ರತಿಮೆಗಳು ಅನ್ಯರಾಷ್ಟ್ರಗಳ ದೇವರುಗಳೆಲ್ಲ I ಸರ್ವೇಶ್ವರನಿಂದಲೇ ಉಂಟಾಯಿತು ಆಕಾಶಮಂಡಲವೆಲ್ಲ II</verse>
				<verse number="27">ಇವೆ ಮಹಿಮೆ, ಮಹತ್ವ, ಆತನ ಸನ್ನಿಧಿಯಲಿ I ಶಕ್ತಿ, ಸಂತೋಷ ಆತನ ಗರ್ಭಗುಡಿಯಲಿ II</verse>
				<verse number="28">ಶಕ್ತಿಸಾಮರ್ಥ್ಯ ಸರ್ವೇಶ್ವರನವೇ ಎಂದು I ಜಗದ ರಾಷ್ಟ್ರಗಳು ಘನಪಡಿಸಲಿ ಆತನನು ಎಂದೆಂದೂ II</verse>
				<verse number="29">ಆತನ ನಾಮಕೆ ಘನತೆ ಗೌರವವನು ತನ್ನಿ I ಕಾಣಿಕೆಯೊಂದಿಗೆ ಆತನ ಮಂದಿರಕೆ ಬನ್ನಿ II</verse>
				<verse number="30">ಸರ್ವೇಶನಿಗೆ ಮಣಿಯಿರಿ ಪವಿತ್ರ ವಸ್ತ್ರಧಾರಿಗಳಂತೆ I ಅಂಜಿಕೆಯಿಂದ ನಡುಗಲಿ ಜಗವಿಡೀ ಆತನ ಮುಂದೆ I ಕದಲದ ಸ್ಥಿರತೆಯನು ಇತ್ತಿಹನೀ ಧರೆಗೆ II</verse>
				<verse number="31">“ಹರ್ಷಿಸಲಿ ಆಕಾಶ, ಸಂತೋಷಿಸಲಿ ಭೂಲೋಕ I ಗರ್ಜಿಸಲಿ ಸಮುದ್ರ ಮತ್ತು ಅದರೊಳಿರುವುದೆಲ್ಲ I ಸಾರಲಿ ರಾಷ್ಟ್ರಗಳಿಗೆ ಸರ್ವೇಶ್ವರ ರಾಜನೆಂದು I ಧರೆಗೆ ನ್ಯಾಯತೀರಿಸಲು ಖಂಡಿತ ಬರುವನೆಂದು II</verse>
				<verse number="32"></verse>
				<verse number="33">ಉಲ್ಲಾಸಿಸಲಿ ಹೊಲಗದ್ದೆಗಳು ಪೈರುಪಚ್ಚೆಗಳು I ಹರ್ಷಧ್ವನಿಗೈಯಲಿ ಕಾಡಿನ ಫಲವೃಕ್ಷಗಳು II</verse>
				<verse number="34">ಪ್ರಭು ದಯಾಪೂರಿತ, ಆತನ ಪ್ರೀತಿ ಶಾಶ್ವತ I ತೋರಿ ಆತನಿಗೆ ನಿಮ್ಮ ಸ್ತೋತ್ರ ಕೃತಜ್ಞತಾ II</verse>
				<verse number="35">ಹೇ ದೇವಾ, ನಮ್ಮ ಸಹಾಯಕ, ನಮ್ಮನ್ನು ಉದ್ಧರಿಸು I ನಾಡು ನಾಡುಗಳಿಂದ ನಮ್ಮನ್ನು ಒಂದುಗೂಡಿಸು I ನಿನ್ನ ಪವಿತ್ರ ನಾಮವನು ಭಜಿಸುವೆವು ನಾವು I ನಿನ್ನ ಸ್ತುತಿಸ್ತೋತ್ರಗಳಲಿ ಹೆಚ್ಚಳಪಡುವೆವು II</verse>
				<verse number="36">ಇಸ್ರಯೇಲಿನ ದೇವನಾದ ಸರ್ವೇಶಗೆ ಸ್ತೋತ್ರ I ಅನಾದಿಯಿಂದ ಯುಗಯುಗಾಂತರಕು ಸ್ತೋತ್ರ I ಜನರೆಲ್ಲರು ಹೇಳಲಿ ‘ಆಮೆನ್,’ ಸರ್ವೇಶ್ವರನಿಗೆ ಸ್ತೋತ್ರ II</verse>
				<verse number="37">ನಿಬಂಧನಾ ಮಂಜೂಷದ ಮುಂದೆ ಪ್ರತಿದಿನವೂ ಆರಾಧನೆ ನಡೆಸುವ ಜವಾಬ್ದಾರಿಯನ್ನು ಆಸಾಫ ಮತ್ತು ಅವನ ಜೊತೆ ಲೇವಿಯರಿಗೆ ಅರಸ ದಾವೀದ ಶಾಶ್ವತವಾಗಿ ವಹಿಸಿಕೊಟ್ಟನು. ಅಲ್ಲಿ ಅವರು ತಮ್ಮ ಕರ್ತವ್ಯವನ್ನು ದಿನನಿತ್ಯವೂ ನೆರವೇರಿಸಬೇಕಾಗಿತ್ತು.</verse>
				<verse number="38">ಯೆದುತೂನನ ಮಗ ಓಬೇದೆದೋಮನೂ ಅವನ ಗೋತ್ರದ ಅರವತ್ತ ಎಂಟು ಜನರೂ ಅವರಿಗೆ ಸಹಾಯಕರು ಆಗಿದ್ದರು. ಹೋಸ ಮತ್ತು ಓಬೇದೆದೋಮರು ದ್ವಾರಪಾಲಕರ ಮೇಲ್ವಿಚಾರಕರಾಗಿದ್ದರು.</verse>
				<verse number="39">ಯಾಜಕ ಚಾದೋಕ ಮತ್ತು ಅವನ ಜೊತೆ ಯಾಜಕರು ಗಿಬ್ಯೋನಿನಲ್ಲಿದ್ದ ಸರ್ವೇಶ್ವರನ ಗುಡಾರದಲ್ಲಿ ಆರಾಧನೆಯನ್ನು ನಡೆಸಲು ನೇಮಕರಾಗಿದ್ದರು.</verse>
				<verse number="40">ಸರ್ವೇಶ್ವರ ಇಸ್ರಯೇಲರಿಗೆ ಕೊಟ್ಟ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಬಲಿಪೀಠದ ಮೇಲೆ ಪ್ರತೀದಿನ ಮುಂಜಾನೆ ಹಾಗು ಸಂಜೆ ದಹನಬಲಿಯರ್ಪಿಸಬೇಕಾಗಿ ಇತ್ತು.</verse>
				<verse number="41">ಅಲ್ಲಿ ಅವರೊಂದಿಗೆ ಸರ್ವೇಶ್ವರನ ನಿತ್ಯಪ್ರೀತಿಗಾಗಿ ಅವರನ್ನು ಸ್ತುತಿಸಿ, ಸಂಗೀತ ಹಾಡಲು ಹೇಮಾನ್, ಯೆದುತೂನ ಹಾಗು ಇನ್ನಿತರರು ನಿರ್ದಿಷ್ಟವಾಗಿ ನೇಮಕರಾಗಿದ್ದರು.</verse>
				<verse number="42">ಸ್ತುತಿಗೀತೆಗಳನ್ನು ಹಾಡುವಾಗ ತುತೂರಿ, ತಾಳ, ಮತ್ತಿತರ ವಾದ್ಯಗಳನ್ನು ಬಾರಿಸುವವರ ಮೇಲ್ವಿಚಾರಣೆಯೂ ಹೇಮಾನ್ ಮತ್ತು ಯೆದುತೂನರದಾಗಿತ್ತು. ಯೆದುತೂನನ ಮಕ್ಕಳಿಗೆ ದ್ವಾರಗಳನ್ನು ಕಾಯುವ ಹೊಣೆಯೂ ಇತ್ತು.</verse>
				<verse number="43">ಅನಂತರ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ತೆರಳಿದರು. ತನ್ನ ಕುಟುಂಬದವರನ್ನು ಆಶೀರ್ವದಿಸಲು ದಾವೀದನೂ ತನ್ನ ಮನೆಗೆ ಹೋದನು.</verse>
			</chapter>
			<chapter number="17">
				<verse number="1">ಆಗ ಅರಸ ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದನು.</verse>
				<verse number="2">ಒಂದು ದಿನ ಅವನು ಪ್ರವಾದಿ ನಾತಾನನನ್ನು ಬರಮಾಡಿ, “ನೋಡು, ನಾನು ವಾಸಮಾಡುತ್ತಾ ಇರುವುದು ದೇವದಾರು ಮರದಿಂದ ಮಾಡಿದ ಅರಮನೆಯಲ್ಲಿ; ಆದರೆ ಸರ್ವೇಶ್ವರನ ನಿಬಂಧನ ಮಂಜೂಷವಿರುವುದು ಬಟ್ಟೆಯಿಂದ ಮಾಡಿದ ಗುಡಾರದಲ್ಲಿ!” ಎಂದನು.</verse>
				<verse number="3">ಅದಕ್ಕೆ ನಾತಾನನು ಸಮ್ಮತಿಸಿ, “ನಿಮಗೆ ಮನಸ್ಸಿದ್ದಂತೆ ಮಾಡಿ; ಸರ್ವೇಶ್ವರ ನಿಮ್ಮೊಡನೆ ಇದ್ದಾರೆ,” ಎಂದನು.</verse>
				<verse number="4">ಆದರೆ ಅದೇ ರಾತ್ರಿ ಸರ್ವೇಶ್ವರ ನಾತಾನನಿಗೆ ಹೀಗೆಂದು ಆಜ್ಞಾಪಿಸಿದರು:</verse>
				<verse number="5">“ನೀನು ಹೋಗಿ ನನ್ನ ದಾಸ ದಾವೀದನಿಗೆ ತಿಳಿಸಬೇಕಾದುದು ಇದು: ‘ನೀನು ನನಗೊಂದು ದೇವಾಲಯವನ್ನು ಕಟ್ಟಬಾರದು.</verse>
				<verse number="6">ನಾನು ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಂದಿನಿಂದ ಇಂದಿನವರೆಗೆ ದೇವಾಲಯದಲ್ಲಿ ವಾಸಮಾಡಲಿಲ್ಲ; ಗುಡಾರದಲ್ಲೇ ವಾಸಿಸುತ್ತಿದ್ದೆನು. ಹೀಗೆ ಇಸ್ರಯೇಲರ ಮಧ್ಯೆ ಸಂಚರಿಸುತ್ತಿದ್ದಾಗಲೆಲ್ಲಾ ನನ್ನ ಜನರಾದ ಅವರನ್ನು ಪಾಲಿಸುವುದಕ್ಕೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅವರಾರಿಂದಲೂ ‘ನೀವೇಕೆ ನನಗೆ ದೇವದಾರು ಮರದಿಂದ ದೇವಾಲಯವನ್ನು ಕಟ್ಟಿಸಲಿಲ್ಲ?’ ಎಂದು ಕೇಳಿದ್ದಿಲ್ಲ’.”</verse>
				<verse number="7">“ಇದಲ್ಲದೆ, ನೀನು ನನ್ನ ದಾಸ ದಾವೀದನಿಗೆ, ಸರ್ವಶಕ್ತ ಸರ್ವೇಶ್ವರನಾದ ನಾನೇ ಹೇಳಿದೆನೆಂದು ಹೀಗೆ ತಿಳಿಸು: ‘ಕುರಿಗಳ ಹಿಂದೆ ತಿರುಗಾಡುತ್ತಿದ್ದ ನಿನ್ನನ್ನು ಅಡವಿಯಿಂದ ಆಯ್ದುಕೊಂಡು ನನ್ನ ಪ್ರಜೆ ಇಸ್ರಯೇಲರ ಮೇಲೆ ನಾಯಕನನ್ನಾಗಿ ನೇಮಿಸಿದೆ.</verse>
				<verse number="8">ನೀನು ಹೋದ ಕಡೆಯೆಲ್ಲಾ ನಿನ್ನ ಸಂಗಡ ಇದ್ದೆ. ನಿನ್ನ ಶತ್ರುಗಳನ್ನೆಲ್ಲ ನಿನ್ನ ಕಣ್ಮುಂದೆಯೆ ಸದೆಬಡಿದೆ. ಜಗದ ಮಹಾತ್ಮರ ಹೆಸರಿನಂತೆ ನಿನ್ನ ಹೆಸರನ್ನು ಪ್ರಸಿದ್ಧಗೊಳಿಸುವೆನು.</verse>
				<verse number="9">ನನ್ನ ಪ್ರಜೆ ಇಸ್ರಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಇನ್ನು ಮೇಲೆ ಅವರು ಯಾವ ಭಯವೂ ಇಲ್ಲದೆ ಅಲ್ಲೇ ವಾಸಿಸುವರು.</verse>
				<verse number="10">ಪೂರ್ವಕಾಲದಲ್ಲಿ ನಾನು ನನ್ನ ಜನರಿಗೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅಲ್ಲಿಂದೀಚೆಗೆ ಇಸ್ರಯೇಲರು ಶೋಷಣೆಗೆ ಗುರಿಯಾಗದಂತೆ ಇನ್ನು ಗುರಿಯಾಗರು. ನಿನ್ನ ಶತ್ರುಗಳನ್ನೆಲ್ಲ ನಿನಗೆ ಅಧೀನಮಾಡುವೆನು. ಅದು ಮಾತ್ರವಲ್ಲ, ಸರ್ವೇಶ್ವರನಾದ ನಾನು ನಿನಗಾಗಿ ಒಂದು ಮನೆತನವನ್ನು ಕಟ್ಟುವೆನೆಂದು ಮಾತುಕೊಡುತ್ತೇನೆ.</verse>
				<verse number="11">ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.</verse>
				<verse number="12">ನನಗಾಗಿ ಒಂದು ದೇವಾಲಯವನ್ನು ಕಟ್ಟುವವನು ಅವನೇ. ನಾನು ಅವನ ಸಿಂಹಾಸನವನ್ನು ಸ್ಥಿರಪಡಿಸುವೆನು.</verse>
				<verse number="13">ನಾನು ಅವನಿಗೆ ತಂದೆಯಾಗಿರುವೆನು, ಅವನು ನನಗೆ ಮಗನಾಗಿರುವನು. ನಿನಗಿಂತ ಮುಂಚೆ ಇದ್ದವನನ್ನು ನನ್ನ ಕೃಪೆ ಬಿಟ್ಟು ಹೋಗದ ಹಾಗೆ ಅವನನ್ನು ಬಿಟ್ಟು ಹೋಗುವುದಿಲ್ಲ.</verse>
				<verse number="14">ಅವನನ್ನು ನನ್ನ ಮನೆಯಲ್ಲೂ ನನ್ನ ರಾಜ್ಯದಲ್ಲೂ ಸದಾ ಸ್ಥಿರಗೊಳಿಸುವೆನು. ಅವನ ಸಿಂಹಾಸನ ಶಾಶ್ವತವಾಗಿರುವುದು’.”</verse>
				<verse number="15">ನಾತಾನನು ತನಗಾದ ದರ್ಶನದ ಈ ಮಾತುಗಳನ್ನೆಲ್ಲ ದಾವೀದನಿಗೆ ಹೇಳಿದನು.</verse>
				<verse number="16">ಬಳಿಕ ಅರಸ ದಾವೀದನು ಸರ್ವೇಶ್ವರನ ಸನ್ನಿಧಿಗೆ ಹೋಗಿ ಅಲ್ಲಿ ಕುಳಿತುಕೊಂಡು, “ದೇವರೇ, ಸರ್ವೇಶ್ವರಾ, ನನ್ನಂಥವನಿಗೆ ತಾವು ಈ ಪದವಿಯನ್ನು ಅನುಗ್ರಹಿಸಿದ್ದೀರಿ; ತಾವು ನನ್ನನ್ನು ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು! ನನ್ನ ಕುಟುಂಬ ಎಷ್ಟರದು!</verse>
				<verse number="17">ದೇವರೇ, ಇದೂ ಸಾಲದೆಂದೆಣಿಸಿ, ನಿಮ್ಮ ದಾಸನ ಬಹುದೂರ ಸಂತಾನದ ವಿಷಯದಲ್ಲೂ ತಾವು ವಾಗ್ದಾನ ಮಾಡಿರುವಿರಿ. ದೇವರೇ, ಸರ್ವೇಶ್ವರಾ, ನೀವು ನನ್ನನ್ನು ಒಬ್ಬ ಮಹಾನ್ ವ್ಯಕ್ತಿಯನ್ನೋ ಎಂಬಂತೆ ಭಾವಿಸಿದಿರಿ; ತಾವು ಹೀಗೆ ವರ್ತಿಸುವುದು ನರಮಾನವರಿಗೆ ಎಂಥಾ ಭಾಗ್ಯ!</verse>
				<verse number="18">ನೀವು ನಿಮ್ಮ ದಾಸ ದಾವೀದನನ್ನು ಚೆನ್ನಾಗಿ ಬಲ್ಲಿರಿ; ನಾನು ನನ್ನ ಘನತೆಯನ್ನು ಕುರಿತು ಇನ್ನೇನು ಹೇಳಲಿ?</verse>
				<verse number="19">ಸರ್ವೇಶ್ವರಾ, ನಿಮ್ಮ ದಾಸನಾದ ನನ್ನ ಹಿತಕ್ಕಾಗಿಯೂ ತಮ್ಮ ಚಿತ್ತಾನುಸಾರವಾಗಿಯೂ ಈ ಮಹತ್ಕಾರ್ಯಗಳನ್ನೆಲ್ಲಾ ನಡೆಸಿ ನಿಮ್ಮ ಸರ್ವಮಹತ್ವವನ್ನು ತೋರ್ಪಡಿಸಿದ್ದೀರಿ.</verse>
				<verse number="20">ಸರ್ವೇಶ್ವರಾ, ತಮಗೆ ಸಮಾನರು ಯಾರೂ ಇಲ್ಲ. ನಾವು ಕೇಳಿದಂಥವುಗಳನ್ನೆಲ್ಲಾ ಆಲೋಚಿಸಿ ನೋಡಿದರೆ ತಮ್ಮ ಹೊರತು, ಬೇರಾವ ದೇವರೂ ಇಲ್ಲ ಎಂಬುದು ನಿಶ್ಚಯ.</verse>
				<verse number="21">ತಮ್ಮ ಇಸ್ರಯೇಲ್ ಪ್ರಜೆಗೆ ಸಮನಾದ ಜನಾಂಗ ಲೋಕದಲ್ಲಿ ಬೇರೆ ಯಾವುದಿದೆ? ದೇವರಾದ ತಾವೇ ಬಂದು ಅದನ್ನು ವಿಮೋಚಿಸಿ ಸ್ವಪ್ರಜೆಯನ್ನಾಗಿಸಿಕೊಂಡಿರಿ; ಆಶ್ಚರ್ಯಕರವಾದ ಅದ್ಭುತಕಾರ್ಯಗಳಿಂದ ನಿಮ್ಮ ನಾಮವನ್ನು ಪ್ರಸಿದ್ಧಿಪಡಿಸಿದ್ದೀರಿ. ಈಜಿಪ್ಟರ ಕೈಯಿಂದ ತಮ್ಮ ಪ್ರಜೆಯನ್ನು ತಪ್ಪಿಸಿ, ರಕ್ಷಿಸಿದಿರಿ. ಅನ್ಯಜನಾಂಗಗಳನ್ನು ಅವರ ನಾಡಿನಿಂದ ಹೊರಡಿಸಿಬಿಟ್ಟಿರಿ.</verse>
				<verse number="22">ಇಸ್ರಯೇಲರು ಸದಾಕಾಲ ನಿಮ್ಮ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದಿರಿ;</verse>
				<verse number="23">ಸರ್ವೇಶ್ವರಾ, ನೀವು ಅವರಿಗೆ ದೇವರಾದಿರಿ. ಸರ್ವೇಶ್ವರಾ, ತಮ್ಮ ದಾಸನನ್ನೂ ಅವನ ಕುಟುಂಬವನ್ನೂ ಕುರಿತು ನೀವು ಮಾಡಿದ ವಾಗ್ದಾನವನ್ನು ಶಾಶ್ವತಪಡಿಸಿ, ನೆರವೇರಿಸಿರಿ. ಅದು ಸದಾ ಸ್ಥಿರವಾಗಿರಲಿ.</verse>
				<verse number="24">‘ಸರ್ವಶಕ್ತರಾದ ಸರ್ವೇಶ್ವರ, ಇಸ್ರಯೇಲರ ದೇವರು; ತಮ್ಮ ದಾಸ ದಾವೀದನ ಮನೆತನವನ್ನು ತಮ್ಮ ಸನ್ನಿಧಿಯಲ್ಲಿ ಸ್ಥಿರವಾಗಿಟ್ಟಿದ್ದಾರೆ’ ಎಂದು ಜನರು ನಿಮ್ಮ ನಾಮವನ್ನು ಕೊಂಡಾಡಲಿ.</verse>
				<verse number="25">ನನ್ನ ದೇವರೇ, ತಾವು ತಮ್ಮ ದಾಸನಿಗೆ, ‘ನಾನು ನಿನಗೊಂದು ಮನೆತನವನ್ನು ಕಟ್ಟುವೆನು’ ಎಂದು ವಾಗ್ದಾನ ಮಾಡಿದ್ದೀರಿ. ಆದುದರಿಂದಲೇ ಈ ಪ್ರಕಾರ ನಿಮ್ಮನ್ನು ಪ್ರಾರ್ಥಿಸುವುದಕ್ಕೆ ಧೈರ್ಯಗೊಂಡೆ.</verse>
				<verse number="26">ಸರ್ವೇಶ್ವರಾ, ತಮ್ಮ ದಾಸನಾದ ನನಗೆ ಇಂಥ ಶ್ರೇಷ್ಠ ವಾಗ್ದಾನ ಮಾಡಿದ ನೀವು ದೇವರಾಗಿದ್ದೀರಿ.</verse>
				<verse number="27">ಈಗ ನಿಮ್ಮ ದಾಸನ ಮನೆತನವನ್ನು ಆಶೀರ್ವದಿಸಿರಿ; ಅದನ್ನು ಸದಾಕಾಲ ನಿಮ್ಮ ಆಶ್ರಯದಲ್ಲಿ ಇಟ್ಟುಕೊಳ್ಳಬೇಕೆಂದು ಮನಸ್ಸು ಮಾಡಿದ್ದೀರಿ; ಸರ್ವೇಶ್ವರಾ, ನೀವು ಅದನ್ನು ಆಶೀರ್ವದಿಸಿದ್ದೀರಿ; ಅದು ನಿತ್ಯವು ಸೌಭಾಗ್ಯದಿಂದ ಇರುವುದು,” ಎಂದು ಪ್ರಾರ್ಥಿಸಿದನು.</verse>
			</chapter>
			<chapter number="18">
				<verse number="1">ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಅವರಿಂದ ಗತ್‍ ಪಟ್ಟಣವನ್ನೂ ಅದರ ಗ್ರಾಮಗಳನ್ನೂ ವಶಪಡಿಸಿಕೊಂಡನು.</verse>
				<verse number="2">ಆಮೇಲೆ ಮೋವಾಬ್ಯರನ್ನು ಸೋಲಿಸಿದನು. ಅವರು ದಾವೀದನಿಗೆ ಅಧೀನರಾಗಿ ಅವನಿಗೆ ಕಪ್ಪಕೊಡಬೇಕಾಯಿತು.</verse>
				<verse number="3">ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ಚೋಬದ ಅರಸನಾದ ಹದರೆಜೆರನನ್ನು ದಾವೀದನು ಹಮಾತಿನ ಬಳಿಯಲ್ಲಿ ಪರಾಭವಗೊಳಿಸಿದನು.</verse>
				<verse number="4">ಸಾವಿರದ ಏಳುನೂರು ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದನು; ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದುಬಿಟ್ಟನು.</verse>
				<verse number="5">ದಮಸ್ಕದ ಸಿರಿಯಾದವರು ಚೋಬದ ಅರಸನಾದ ಹದದೆಜೆರನಿಗೆ ನೆರವಾಗಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸದೆಬಡಿದನು;</verse>
				<verse number="6">ಇದಲ್ಲದೆ ಅವನು ದಮಸ್ಕದ ಸಿರಿಯಾ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಸಿರಿಯಾದವರು ಅವನಿಗೆ ಅಧೀನರಾಗಿ ಕಪ್ಪ ಕೊಡತೊಡಗಿದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯ ದೊರಕುತ್ತಿತ್ತು.</verse>
				<verse number="7">ದಾವೀದನು ಹದರೆಜೆರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ಕಿತ್ತುಕೊಂಡು ಯೆರುಸಲೇಮಿಗೆ ಒಯ್ದನು.</verse>
				<verse number="8">ಇದಲ್ಲದೆ, ಹದರೆಜೆರನ ಪಟ್ಟಣಗಳಾದ ಟಿಭತಿನಿಂದಲೂ ಕೂನಿಂದಲೂ ಹೇರಳ ತಾಮ್ರವನ್ನು ತೆಗೆದುಕೊಂಡು ಬಂದನು. ಸೊಲೊಮೋನನು ‘ಕಂಚಿನ ಕಡಲೆಂಬ ಪಾತ್ರೆ’ಯನ್ನೂ ಕಂಬಗಳನ್ನೂ ಇನ್ನಿತರ ಸಾಮಾನುಗಳನ್ನೂ ಮಾಡಿಸಿದ್ದು ಆ ತಾಮ್ರದಿಂದಲೇ.</verse>
				<verse number="9">ದಾವೀದನು ಚೋಬನ ಅರಸನಾದ ಹದರೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನ ಹಮಾತಿನ ಅರಸನಾದ ತೋವಿಗೆ ಮುಟ್ಟಿತು.</verse>
				<verse number="10">(ತೋವಿಗೂ ಹದರೆಜೆರನಿಗೂ ವಿರೋಧವಿತ್ತು). ದಾವೀದನು ಹದರೆಜೆರನ ಮೇಲೆ ದಾಳಿಮಾಡಿ ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ಅಭಿನಂದಿಸುವುದಕ್ಕಾಗಿ ಹಾಗು ಹರಸುವುದಕ್ಕಾಗಿ ತನ್ನ ಮಗ ಹದೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೆ ವಿಧವಿಧವಾದ ತಾಮ್ರ, ಬೆಳ್ಳಿ ಹಾಗು ಬಂಗಾರದ ಪಾತ್ರೆಗಳನ್ನು ತಂದನು.</verse>
				<verse number="11">ಅರಸ ದಾವೀದನು ಕಾಣಿಕೆಗಳನ್ನು ಮಾತ್ರವಲ್ಲದೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿಯರು, ಫಿಲಿಷ್ಟಿಯರು ಹಾಗು ಅಮಾಲೇಕ್ಯರು ಎಂಬ ಸುತ್ತಮುತ್ತಿನ ಜನಾಂಗಗಳಿಂದ ಕಿತ್ತುಕೊಂಡ ಬೆಳ್ಳಿಬಂಗಾರವನ್ನೂ ಸರ್ವೇಶ್ವರನಿಗೆ ಪ್ರತಿಷ್ಠಾಪಿಸಿದನು.</verse>
				<verse number="12">ಇದಲ್ಲದೆ ಚೆರೂಯಳ ಮಗ ಅಬ್ಷೈಯು ಉಪ್ಪಿನ ತಗ್ಗಿನಲ್ಲಿ ಎದೋಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದನು.</verse>
				<verse number="13">ದಾವೀದನು ಎದೋಮಿನಲ್ಲಿ ಕಾವಲುದಂಡುಗಳನ್ನಿರಿಸಿದ್ದನು. ಹೀಗೆ ಎದೋಮ್ಯರೆಲ್ಲರೂ ದಾವೀದನ ಅಡಿಯಾಳುಗಳಾದರು. ಸರ್ವೇಶ್ವರನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.</verse>
				<verse number="14">ದಾವೀದನು ಇಸ್ರಯೇಲರ ಅರಸನಾಗಿ ಪ್ರಜೆಗಳೆಲ್ಲರನ್ನು ಧರ್ಮಾನುಸಾರ, ನ್ಯಾಯಯುತವಾಗಿ ನಡೆಸುತ್ತಿದ್ದನು.</verse>
				<verse number="15">ಚೆರೂಯಳ ಮಗ ಯೋವಾಬನು ಅವನ ಸೇನಾಪತಿಯಾಗಿದ್ದನು. ಅಹೀಲೂದನ ಮಗ ಯೆಹೋಷಾಫಾಟನು ಅವನ ಮಂತ್ರಿಯಾಗಿದ್ದನು.</verse>
				<verse number="16">ಅಹೀಟೂಬನ ಮಗ ಚಾದೋಕನು ಹಾಗು ಅಬೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು; ಶವ್ಷನು ಅವನಿಗೆ ಲೇಖಕನಾಗಿದ್ದನು.</verse>
				<verse number="17">ಯೆಹೋಯಾದಾವನ ಮಗ ಬಿನಾಯನು ‘ಕೆರೇತ್ಯ’, ‘ಪೆಲೇತ್ಯ’ ಎಂಬ ಕಾವಲುದಂಡುಗಳ ಮುಖ್ಯಸ್ಥನಾಗಿದ್ದನು. ದಾವೀದನ ಮಕ್ಕಳು ಅರಸನ ಒಡ್ಡೋಲಗದಲ್ಲಿ ಪ್ರಧಾನರಾಗಿದ್ದರು.</verse>
			</chapter>
			<chapter number="19">
				<verse number="1">ಇದಾದನಂತರ ಅಮ್ಮೋನಿಯರ ಅರಸ ನಾಹಾಷನು ಸತ್ತನು. ಅವನಿಗೆ ಬದಲಾಗಿ ಅವನ ಮಗ ಅರಸನಾದನು.</verse>
				<verse number="2">ದಾವೀದನು, “ನಾಹಾಷನು ನನಗೆ ಸ್ನೇಹ ತೋರಿಸಿದ್ದರಿಂದ ನಾನೂ ಅವನ ಮಗ ಹಾನೂನನಿಗೆ ಸ್ನೇಹ ತೋರಿಸುವೆನು,” ಎಂದುಕೊಂಡು ಪಿತೃಶೋಕದಲ್ಲಿದ್ದ ಹಾನೂನನನ್ನು ಸಂತೈಸುವುದಕ್ಕಾಗಿ ತನ್ನ ದೂತರನ್ನು ಕಳುಹಿಸಿದನು. ಅವರು ಹಾನೂನನನ್ನು ಸಂತೈಸುವುದಕ್ಕಾಗಿ ಅಮ್ಮೋನಿಯರ ದೇಶಕ್ಕೆ ಬಂದರು.</verse>
				<verse number="3">ಅಲ್ಲಿನ ನಾಯಕರು ಹಾನೂನನಿಗೆ, “ದಾವೀದನು ನಿಮ್ಮ ಬಳಿಗೆ ಸಂತೈಸುವವರನ್ನು ಕಳುಹಿಸಿದ್ದಾನೆ. ಇದರಿಂದ ಅವನು ನಿಮ್ಮ ತಂದೆಯನ್ನು ಸನ್ಮಾನಿಸುತ್ತಾನೆ ಎಂದು ತಿಳಿಯುತ್ತೀರೋ? ಇಲ್ಲ, ಅವನ ಆಳುಗಳು ದೇಶವನ್ನು ಸಂಚರಿಸಿ ನೋಡಿ ಅದನ್ನು ಸ್ವಾಧೀನ ಮಾಡಿಕೊಳ್ಳಬೇಕೆಂದು ಬಂದಿದ್ದಾರೆ,” ಎಂದು ದೂರಿತ್ತರು.</verse>
				<verse number="4">ಆದುದರಿಂದ ಹಾನೂನನು ದಾವೀದನ ಸೈನಿಕರನ್ನು ಬಂಧಿಸಿದನು. ಗಡ್ಡದ ಅರ್ಧಭಾಗವನ್ನು ಬೋಳಿಸಿ ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.</verse>
				<verse number="5">ಅವರು ಹೋಗಿ ಈ ವರ್ತಮಾನವನ್ನು ದಾವೀದನಿಗೆ ಹೇಳಿಕಳುಹಿಸಿದರು. ಬಹಳವಾಗಿ ಅಪಮಾನಹೊಂದಿದ ಅವರಿಗೆ ಆಗ ದಾವೀದನು ಆಳುಗಳ ಮುಖಾಂತರ, “ನಿಮ್ಮ ಗಡ್ಡ ಬೆಳೆಯುವವರೆಗೆ ನೀವು ಜೆರಿಕೋವಿನಲ್ಲಿದ್ದು ಅನಂತರ ಬನ್ನಿ,” ಎಂದು ಹೇಳಿಸಿದನು.</verse>
				<verse number="6">ತಾವು ದಾವೀದನಿಗೆ ವೈರಿಗಳಾದೆವು ಎಂದು ಹಾನೂನನಿಗೂ ಅಮ್ಮೋನಿಯರಿಗೂ ತಿಳಿಯಿತು. ಆದುದರಿಂದ ಅವರು ಎರಡು ನದಿಗಳ ಮಧ್ಯದಲ್ಲಿರುವ ಸಿರಿಯಾ ಸೀಮೆಯಿಂದಲೂ ಸಿರಿಯಾದ ಮಾಕದಿಂದಲೂ ಚೊಬಾ ರಾಜ್ಯದಿಂದಲೂ ರಥಗಳನ್ನೂ ರಾಹುತರನ್ನೂ ತರಿಸುವುದಕ್ಕಾಗಿ ಮೂವತ್ತನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕಳುಹಿಸಿದರು.</verse>
				<verse number="7">ಆಗ ಮೂವತ್ತೆರಡು ಸಾವಿರ ಮಂದಿ ರಥಬಲದವರೂ ಮಾಕದ ಅರಸನೂ ಅವನ ದಂಡಾಳುಗಳೂ ಅವರ ಸಹಾಯಕ್ಕಾಗಿ ಮೆದಬ ಊರಿನ ಮುಂದೆ ಪಾಳೆಯ ಮಾಡಿಕೊಂಡರು.</verse>
				<verse number="8">ಈ ಸುದ್ದಿ ದಾವೀದನಿಗೆ ಮುಟ್ಟಿತು. ಅವನು ಯೋವಾಬನನ್ನೂ ಎಲ್ಲಾ ಶೂರಸೈನಿಕರನ್ನೂ ಕಳುಹಿಸಿದನು.</verse>
				<verse number="9">ಕೂಡಲೆ ಅಮ್ಮೋನಿಯರು ಹೊರಗೆ ಬಂದು ಊರುಬಾಗಿಲಿನ ಬಳಿಯಲ್ಲಿ ವ್ಯೂಹಕಟ್ಟಿದರು. ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಮೈದಾನದಲ್ಲಿ ಇಳಿದುಕೊಂಡಿದ್ದರು.</verse>
				<verse number="10">ಯೋವಾಬನು ತನ್ನ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾದದ್ದನ್ನು ಕಂಡು ಇಸ್ರಯೇಲರಲ್ಲಿ ಶ್ರೇಷ್ಠರಾದ ಎಲ್ಲಾ ಸೈನಿಕರನ್ನು ಆರಿಸಿಕೊಂಡು ಅವರನ್ನು ಸಿರಿಯಾದವರಿಗೆ ಇದಿರಾಗಿ ನಿಲ್ಲಿಸಿದನು.</verse>
				<verse number="11">ಉಳಿದ ಜನರನ್ನು ತನ್ನ ತಮ್ಮನಾದ ಅಬೀಷೈಯ ವಶಕ್ಕೆ ಕೊಟ್ಟು,</verse>
				<verse number="12">“ಸಿರಿಯಾದವರು ನನ್ನನ್ನು ಸೋಲಿಸುವಂತೆ ಕಂಡರೆ ನೀನು ನನ್ನ ಸಹಾಯಕ್ಕೆ ಬಾ; ಅಮ್ಮೋನಿಯರು ನಿನ್ನನ್ನು ಸೋಲಿಸುವಂತೆ ಕಂಡರೆ ನಾನು ನಿನ್ನ ಸಹಾಯಕ್ಕೆ ಬರುತ್ತೇನೆ.</verse>
				<verse number="13">ಧೈರ್ಯದಿಂದಿರು, ನಮ್ಮ ಜನರಿಗಾಗಿ ಹಾಗು ನಮ್ಮ ದೇವರ ಪಟ್ಟಣಗಳಿಗಾಗಿ ನಮ್ಮ ಪೌರುಷವನ್ನು ತೋರಿಸೋಣ; ಸರ್ವೇಶ್ವರ ತಮಗೆ ಸರಿಕಾಣುವಂಥದನ್ನು ಮಾಡಲಿ,” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.</verse>
				<verse number="14">ಯೋವಾಬನೂ ಅವನ ಜನರೂ ಸಿರಿಯಾದವರಿಗೆ ವಿರೋಧವಾಗಿ ಯುದ್ಧ ಪ್ರಾರಂಭಿಸಿದಾಗ ಸಿರಿಯಾದವರು ಓಡಿಹೋದರು.</verse>
				<verse number="15">ಇವರು ಓಡಿಹೋಗುವುದನ್ನು ಅಮ್ಮೋನಿಯರು ಕಂಡು ಅವರೂ ಅವನ ತಮ್ಮ ಅಬೀಷೈಯ ಎದುರಿನಿಂದ ಓಡಿಹೋಗಿ ಪಟ್ಟಣವನ್ನು ಹೊಕ್ಕರು. ಯೋವಾಬನು ಜೆರುಸಲೇಮಿಗೆ ಹೋದನು.</verse>
				<verse number="16">ಸಿರಿಯಾದವರಿಗೆ ತಮ್ಮ ಸೈನ್ಯ ಇಸ್ರಯೇಲರಿಂದ ಪರಾಭವಗೊಂಡಿತೆಂದು ಗೊತ್ತಾಯಿತು. ಎಂದೇ ಯೂಫ್ರೆಟಿಸ್ ನದಿಯ ಆಚೆಯಲ್ಲಿದ್ದ ಸಿರಿಯಾದವರನ್ನು ಕರೇ ಕಳುಹಿಸಿದರು. ಹದರೆಜೆರನ ಸೇನಾಪತಿಯಾದ ಶೋಫಕನು ಅವರ ನಾಯಕನಾದನು.</verse>
				<verse number="17">ಈ ಸುದ್ದಿ ದಾವೀದನಿಗೆ ಮುಟ್ಟಿದಾಗ ಅವನು ಇಸ್ರಯೇಲರೆಲ್ಲರನ್ನೂ ಕೂಡಿಸಿಕೊಂಡು ಜೋರ್ಡನ್ ನದಿಯನ್ನು ದಾಟಿ, ಸಿರಿಯಾದವರ ಸಮೀಪಕ್ಕೆ ಬಂದು, ಅವರೊಡನೆ ಕಾಳಗ ನಡೆಸಲು ವ್ಯೂಹಕಟ್ಟಿದನು.</verse>
				<verse number="18">ಸಿರಿಯಾದವರು ಯುದ್ಧಕ್ಕೆ ನಿಂತಾಗ ಇಸ್ರಯೇಲರ ಮುಂದೆ ಸೋತು ಓಡಿಹೋದರು;ದಾವೀದನು ಸಿರಿಯಾದವರ ಏಳುಸಾವಿರ ರಥಗಳನ್ನು ಹಾಳುಮಾಡಿದನು. ನಲವತ್ತು ಸಾವಿರ ಮಂದಿ ಕಾಲಾಳುಗಳನ್ನು ಸದೆಬಡಿದನು. ಸೇನಾಪತಿಯಾದ ಶೋಫಕನನ್ನೂ ಕೊಂದುಬಿಟ್ಟನು.</verse>
				<verse number="19">ಹದರೆಜೆರನಿಗೆ ದಾಸರಾಗಿ ಇದ್ದವರು ಇಸ್ರಯೇಲರ ಮುಂದೆ ತಮ್ಮ ಕೈಸಾಗದೆಂದು ತಿಳಿದು, ದಾವೀದನೊಡನೆ ಸಂಧಾನ ಮಾಡಿಕೊಂಡು ಅವನಿಗೆ ಅಧೀನರಾದರು.ಅಂದಿನಿಂದ ಸಿರಿಯಾದವರು ಅಮ್ಮೋನಿಯರಿಗೆ ಸಹಾಯಮಾಡಲು ಸಮ್ಮತಿಸಲಿಲ್ಲ.</verse>
			</chapter>
			<chapter number="20">
				<verse number="1">ಮರುವರ್ಷ, ಅರಸರು ಯುದ್ಧಕ್ಕೆ ಹೊರಡುವ ಕಾಲದಲ್ಲಿ ಯೋವಾಬನು ಅಮ್ಮೋನಿಯರ ಪ್ರಾಂತ್ಯಗಳನ್ನು ಹಾಳುಮಾಡಿ ರಬ್ಬಕ್ಕೆ ಮುತ್ತಿಗೆ ಹಾಕಿದನು. ಅವನೊಡನೆ ಬಲವಾದ ಸೈನ್ಯವಿತ್ತು. ದಾವೀದನು ಜೆರುಸಲೇಮಿನಲ್ಲೇ ಇದ್ದನು. ಯೋವಾಬನು ರಬ್ಬ ಪಟ್ಟಣವನ್ನು ಸ್ವಾಧೀನ ಮಾಡಿಕೊಂಡು ಅದನ್ನು ಹಾಳುಮಾಡಿಬಿಟ್ಟನು.</verse>
				<verse number="2">ದಾವೀದನು ಮಲ್ಕಾಮ ಮೂರ್ತಿಯ ತಲೆಯ ಮೇಲಿದ್ದ ಬಂಗಾರದ ಕಿರೀಟವನ್ನು ತೆಗೆದುಕೊಂಡನು; ಅದು ಸುಮಾರು ಮೂವತ್ತೈದು ಕಿಲೋಗ್ರಾಂ ತೂಕದ್ದು. ಅದರಲ್ಲಿ ಇದ್ದ ರತ್ನವನ್ನು ದಾವೀದನು ತನ್ನ ಶಿರಸ್ಸಿನಲ್ಲಿ ಧರಿಸಿಕೊಂಡನು. ಆ ಪಟ್ಟಣದಿಂದ ಅವನು ದೊಡ್ಡ ಕೊಳ್ಳೆಯನ್ನೇ ಕೊಂಡು ಹೊಯ್ದನು.</verse>
				<verse number="3">ಊರಿನ ನಿವಾಸಿಗಳನ್ನು ಹಿಡಿದು ಗರಗಸ, ಗುದ್ದಲಿ, ಕೊಡಲಿಗಳಿಂದ ಕೆಲಸ ಮಾಡುವುದಕ್ಕೆ ಹಚ್ಚಿದನು. ಅಮ್ಮೋನಿಯರ ಉಳಿದೆಲ್ಲ ಪಟ್ಟಣದವರೆಗೂ ಇದೇ ಗತಿಯಾಯಿತು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಜೆರುಸಲೇಮಿಗೆ ಮರಳಿದನು.</verse>
				<verse number="4">ಬಳಿಕ ಫಿಲಿಷ್ಟಿಯರ ವಿರುದ್ಧ ಗೆಜೆರಿನಲ್ಲಿ ಯುದ್ಧ ನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಿಪ್ಪೈ ಎಂಬವನನ್ನು ಕೊಂದನು. ಫಿಲಿಷ್ಟಿಯರು ಇದರಿಂದ ಕುಗ್ಗಿಹೋದರು.</verse>
				<verse number="5">ಫಿಲಿಷ್ಟಿಯರೊಡನೆ ಇನ್ನೊಮ್ಮೆ ಯುದ್ಧ ನಡೆದಾಗ ಯಾಯೀರನ ಮಗ ಎಲ್ಹಾನಾನನು ಗಿತ್ತೀಯನಾದ ಗೊಲ್ಯಾತನ ತಮ್ಮ ಲಹ್ಮೀಯನನ್ನು ಕೊಂದನು. ಈ ಲಹ್ಮೀಯನ ಬರ್ಜಿಯ ಹಿಡಿಕೆ ನೇಕಾರರ ಕುಂಟೆಯಷ್ಟು ದೊಡ್ಡದಾಗಿತ್ತು.</verse>
				<verse number="6">ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರದ ಪುರುಷ ಇದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ, ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳು ಇದ್ದವು. ಅವನೂ ರೆಫಾಯನು.</verse>
				<verse number="7">ಅವನು ಇಸ್ರಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.</verse>
				<verse number="8">ಗತ್ ಊರಿನವರಾದ ಈ ರೆಫಾಯರು ದಾವೀದನಿಂದಲೂ ಅವನ ಸೇವಕನಿಂದಲೂ ಹತರಾದರು.</verse>
			</chapter>
			<chapter number="21">
				<verse number="1">ಸೈತಾನನು ಇಸ್ರಯೇಲರಿಗೆ ವಿರೋಧವಾಗಿ ಎದ್ದು ಇಸ್ರಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರಿಸಿದನು.</verse>
				<verse number="2">ದಾವೀದನು ಯೋವಾಬನನ್ನೂ ಜನಾಧಿಪತಿಗಳನ್ನೂ ಕರೆದು, “ನನಗೆ ಜನರ ಲೆಕ್ಕ ಗೊತ್ತಾಗುವ ಹಾಗೆ ನೀವು ಬೇರ್ಷೆಬದಿಂದ ದಾನ್ ಊರಿನವರೆಗೂ ಸಂಚರಿಸಿ ಇಸ್ರಯೇಲರನ್ನು ಲೆಕ್ಕಮಾಡಿಕೊಂಡು ಬನ್ನಿ,” ಎಂದು ಆಜ್ಞಾಪಿಸಿದನು.</verse>
				<verse number="3">ಆಗ ಯೋವಾಬನು, “ನನ್ನ ಒಡೆಯರಾದ ಅರಸರೇ, ಸರ್ವೇಶ್ವರ ತಮ್ಮ ಪ್ರಜೆಗಳನ್ನು ನೂರರಷ್ಟು ಹೆಚ್ಚಿಸಲಿ; ಅವರೆಲ್ಲರೂ ನನ್ನ ಒಡೆಯರ ಸೇವಕರಷ್ಟೇ. ಆದರೆ ಒಡೆಯರು ಇಂಥದನ್ನು ಅಪೇಕ್ಷಿಸಿದ್ದೇಕೆ? ಇಸ್ರಯೇಲರನ್ನು ಅಪರಾಧಕ್ಕೆ ಗುರಿಮಾಡುವುದೇಕೆ?” ಎಂದನು.</verse>
				<verse number="4">ಆದರೆ ಅರಸನು ಯೋವಾಬನಿಗೆ ಕಿವಿಗೊಡದೆ ತನ್ನ ಮಾತನ್ನೇ ಸಾಧಿಸಿದ್ದರಿಂದ, ಅವನು ಹೊರಟುಹೋಗಿ ಇಸ್ರಯೇಲರ ಪ್ರಾಂತ್ಯಗಳಲ್ಲೆಲ್ಲಾ ಸಂಚರಿಸಿ ಜೆರುಸಲೇಮಿಗೆ ಹಿಂದಿರುಗಿದನು.</verse>
				<verse number="5">ಯೋವಾಬನು ದಾವೀದನಿಗೆ ಒಪ್ಪಿಸಿದ ಜನಗಣತಿಯ ಅಂಕೆಸಂಖ್ಯೆಗಳು ಇವು: ಇಸ್ರಯೇಲರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಹನ್ನೊಂದು ಲಕ್ಷ; ಯೆಹೂದ್ಯರಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ.</verse>
				<verse number="6">ಅರಸನ ಆಜ್ಞೆ ಯೋವಾಬನಿಗೆ ಹಿಡಿಸಲಿಲ್ಲವಾದ್ದರಿಂದ, ಅವನು ಲೇವಿ, ಬೆನ್ಯಾಮೀನ್ ಕುಲಗಳವರ ಜನಗಣತಿಯನ್ನು ಮಾಡಲಿಲ್ಲ.</verse>
				<verse number="7">ಜನಗಣತಿ ಮಾಡಿದ್ದು ದೇವರಿಗೆ ಕೆಟ್ಟದ್ದು ಎಂದು ಕಂಡಿತು. ಆದ್ದರಿಂದ ಅವರು ಇಸ್ರಯೇಲರನ್ನು ಶಿಕ್ಷಿಸಿದರು.</verse>
				<verse number="8">ಆಗ ದಾವೀದನು, “ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ದೇವರನ್ನು ಪ್ರಾರ್ಥಿಸಿದನು.</verse>
				<verse number="9">ದೇವರು ದಾವೀದನ ದರ್ಶಿಯಾದ ಗಾದನಿಗೆ,</verse>
				<verse number="10">“ನೀನು ದಾವೀದನ ಹತ್ತಿರಕ್ಕೆ ಹೋಗಿ ಅವನಿಗೆ, ‘ನಾನು ಮೂರು ವಿಧವಾದ ಶಿಕ್ಷೆಯನ್ನು ನಿನ್ನ ಮುಂದಿಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಸರ್ವೇಶ್ವರ ಹೇಳುತ್ತಾರೆ’ ಎಂಬುದಾಗಿ ತಿಳಿಸು,” ಎಂದರು.</verse>
				<verse number="11">ಆಗ ಗಾದನು ದಾವೀದನ ಬಳಿಗೆ ಬಂದು, “ಸರ್ವೇಶ್ವರ ಹೇಳುವುದನ್ನು ಕೇಳು:</verse>
				<verse number="12">‘ಮೂರು ವರ್ಷಗಳ ಕಾಲ ಕ್ಷಾಮ ಉಂಟಾಗಬೇಕೋ? ಇಲ್ಲವೆ ಮೂರು ತಿಂಗಳುಗಳವರೆಗೆ ನಿನ್ನ ಶತ್ರುಗಳ ಚಿತ್ರಹಿಂಸೆಗೆ ಬಲಿಯಾಗುವುದು ಬೇಕೋ? ಇಲ್ಲವೆ ಇಸ್ರಯೇಲರ ಸಮಸ್ತ ಪ್ರಾಂತ್ಯಗಳಿಗೆ ಸರ್ವೇಶ್ವರ ಕಳುಹಿಸುವ ಸಂಹಾರಕ ದೂತನಿಂದ ಉಂಟಾಗುವ ಮೂರು ದಿನಗಳ ಘೋರ ವ್ಯಾಧಿರೂಪವಾದ ಸರ್ವೇಶ್ವರನ ಶಿಕ್ಷೆ ಬೇಕೋ? ಈ ಮೂರರಲ್ಲಿ ಒಂದನ್ನು ಆರಿಸಿಕೋ’ ನನ್ನನ್ನು ಕಳುಹಿಸಿದವರಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು,” ಎಂದು ಹೇಳಿದನು.</verse>
				<verse number="13">ಅದಕ್ಕೆ ದಾವೀದನು, “ನಾನು ಬಹಳ ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ. ಸರ್ವೇಶ್ವರನ ಕೈಯಲ್ಲೇ ಬೀಳುತ್ತೇನೆ; ಅವರು ಕೃಪಾಪೂರ್ಣರು, ಮನುಷ್ಯರ ಕೈಯಲ್ಲಿ ಬೀಳಲೊಲ್ಲೆ,” ಎಂದು ಹೇಳಿದನು.</verse>
				<verse number="14">ಆಗ ಸರ್ವೇಶ್ವರ ಇಸ್ರಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದರು; ಅವರಲ್ಲಿ ಇಪ್ಪತ್ತು ಸಾವಿರ ಜನರು ಸತ್ತರು.</verse>
				<verse number="15">ದೇವರು ಜೆರುಸಲೇಮನ್ನು ಸಹ ಸಂಹರಿಸಬೇಕೆಂದು ದೂತನನ್ನು ಕಳುಹಿಸಿದರು. ಆದರೆ ಆ ದೂತನು ಸಂಹರಿಸುವುದಕ್ಕಿದ್ದಾಗ ಸರ್ವೇಶ್ವರ ಅದನ್ನು ಕಂಡು, ಆ ಕೇಡಿನ ವಿಷಯದಲ್ಲಿ ದುಃಖಪಟ್ಟರು. ಸಂಹಾರಕ ದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದು ಆಜ್ಞಾಪಿಸಿದರು. ಆಗ ಸರ್ವೇಶ್ವರನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.</verse>
				<verse number="16">ದಾವೀದನು ಕಣ್ಣೆತ್ತಿ ನೋಡಿ ಸರ್ವೇಶ್ವರನ ದೂತನು ಭೂಮ್ಯಾಕಾಶಗಳ ನಡುವೆ ನಿಂತಿರುವುದನ್ನೂ ಚಾಚಿದ ಕೈಯಲ್ಲಿ ಜೆರುಸಲೇಮಿಗೆ ವಿರೋಧವಾಗಿ ಹಿರಿದ ಕತ್ತಿ ಇರುವುದನ್ನೂ ಕಂಡನು. ಆಗ ಅವನೂ ಹಿರಿಯರೂ ಗೋಣಿತಟ್ಟನ್ನು ಉಟ್ಟುಕೊಂಡು ಬೋರಲಾಗಿ ಬಿದ್ದರು.</verse>
				<verse number="17">ದಾವೀದನು ದೇವರಿಗೆ, “ಜನರನ್ನು ಲೆಕ್ಕಿಸಬೇಕೆಂದು ಆಜ್ಞಾಪಿಸಿದವನು ನಾನಲ್ಲವೇ; ಮಹಾಪಾಪ ಮಾಡಿದವನು ನಾನೇ; ಕುರಿಗಳಂತಿರುವ ಈ ಜನರು ಏನು ಮಾಡಿದ್ದಾರೆ? ಸರ್ವೇಶ್ವರಾ, ನನ್ನ ದೇವರೇ, ನಿಮ್ಮ ಕತ್ತಿ ನಿಮ್ಮ ಜನರನ್ನು ಬಾಧಿಸದೆ, ಅವರಿಗೆ ವಿರೋಧವಾಗಿ ಇರದೆ, ನನಗೂ ನನ್ನ ಮನೆಯವರಿಗೂ ವಿರೋಧ ಆಗಿರಲಿ,” ಎಂದು ಬೇಡಿಕೊಂಡನು.</verse>
				<verse number="18">ಆಗ ಸರ್ವೇಶ್ವರನ ದೂತನು ಗಾದನಿಗೆ, “ಯೆಬೂಸಿಯನಾದ ಒರ್ನಾನನ ಕಣದಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ ಹೋಗಬೇಕೆಂದು ದಾವೀದನಿಗೆ ಹೇಳು,” ಎಂದು ಆಜ್ಞಾಪಿಸಿದನು.</verse>
				<verse number="19">ದಾವೀದನು ಗಾದನ ಮುಖಾಂತರ ತನಗಾದ ಸರ್ವೇಶ್ವರನ ಅಪ್ಪಣೆಯಂತೆ ಹೊರಟನು.</verse>
				<verse number="20">ಅಷ್ಟರಲ್ಲಿ ಗೋದಿಯನ್ನು ತುಳಿಸುತ್ತಿದ್ದ ಒರ್ನಾನನು ದೂತನನ್ನು ನೋಡಿದ್ದನು. ಅವನೊಡನಿದ್ದ ಅವನ ನಾಲ್ಕು ಮಂದಿ ಮಕ್ಕಳು ಅಡಗಿಕೊಂಡಿದ್ದರು.</verse>
				<verse number="21">ದಾವೀದನು ತನ್ನ ಬಳಿಗೆ ಬರುವುದನ್ನು ಒರ್ನಾನನು ಕಂಡು, ಕಣವನ್ನು ಬಿಟ್ಟುಹೋಗಿ, ಅವನಿಗೆ ಅಡ್ಡಬಿದ್ದನು.</verse>
				<verse number="22">ದಾವೀದನು ಅವನಿಗೆ, “ನಿನ್ನ ಕಣವನ್ನೂ ಭೂಮಿಯನ್ನೂ ನನಗೆ ಕೊಡು; ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ಅದರಲ್ಲಿ ಸರ್ವೇಶ್ವರನಿಗಾಗಿ ಒಂದು ಬಲಿಪೀಠವನ್ನು ಕಟ್ಟಿಸುತ್ತೇನೆ; ಪೂರ್ಣ ಕ್ರಯ ತೆಗೆದುಕೊಂಡು ಅದನ್ನು ಕೊಡು,” ಎಂದು ಹೇಳಿದನು.</verse>
				<verse number="23">ಆಗ ಒರ್ನಾನನು ದಾವೀದನಿಗೆ, “ನನ್ನ ಒಡೆಯರಾದ ಅರಸರು ತಮಗೆ ಇಷ್ಟವಾದದ್ದನ್ನು ತೆಗೆದುಕೊಂಡು ಬಲಿ ಅರ್ಪಿಸಬಹುದು. ಬಲಿದಾನಕ್ಕೆ ಇಲ್ಲಿ ಹೋರಿಗಳೂ ಸೌದೆಗೆ ಹಂತೀಕುಂಟೆಗಳೂ ನೈವೇದ್ಯಕ್ಕೆ ಗೋದಿಯೂ ಇರುತ್ತವೆ, ಇವೆಲ್ಲವನ್ನೂ ಕೊಡುತ್ತೇನೆ,” ಎಂದು ಹೇಳಿದನು.</verse>
				<verse number="24">ಅರಸ ದಾವೀದನು ಒರ್ನಾನನಿಗೆ, “ಹಾಗಲ್ಲ, ನಾನು ನಿನ್ನಿಂದ ಪೂರ್ಣಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು ಸರ್ವೇಶ್ವರನಿಗೆ ಬಲಿಯಾಗಿ ಅರ್ಪಿಸಲು ನನಗೆ ಇಷ್ಟವಿಲ್ಲ,” ಎಂದು ಹೇಳಿದನು.</verse>
				<verse number="25">ಅಂತೆಯೇ ಆ ಭೂಮಿಗಾಗಿ ಅವನಿಗೆ ಆರುನೂರು ಬಂಗಾರದ ನಾಣ್ಯಗಳನ್ನು ಕೊಟ್ಟು,</verse>
				<verse number="26">ಅಲ್ಲಿ ಸರ್ವೇಶ್ವರಸ್ವಾಮಿಗಾಗಿ ಬಲಿಪೀಠವನ್ನು ಕಟ್ಟಿಸಿದನು. ಅದರ ಮೇಲೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಿ ಸರ್ವೇಶ್ವರನನ್ನು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಮೊರೆಯನ್ನು ಆಲಿಸಿ, ಆಕಾಶದಿಂದ ಬಲಿಪೀಠದ ಮೇಲೆ ಬೆಂಕಿಯನ್ನು ಬರಮಾಡಿ,</verse>
				<verse number="27">ಆ ಕತ್ತಿಯನ್ನು ಒರೆಯಲ್ಲಿ ಹಾಕಬೇಕೆಂದು ದೂತನಿಗೆ ಆಜ್ಞಾಪಿಸಿದರು. ಅವನು ಹಾಗೆಯೇ ಮಾಡಿದನು.</verse>
				<verse number="28">ಮೋಶೆ ಮರುಭೂಮಿಯಲ್ಲಿ ಮಾಡಿಸಿದ್ದ ಸರ್ವೇಶ್ವರನ ಗುಡಾರವೂ ಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಪೂಜಾಸ್ಥಳದಲ್ಲೇ ಇದ್ದವು.</verse>
				<verse number="29">ಆದರೂ ದಾವೀದನು ಸರ್ವೇಶ್ವರನ ದೂತ ಹಿಡಿದಿದ್ದ ಕತ್ತಿಗೆ ಹೆದರಿ, ದೇವದರ್ಶನಕ್ಕಾಗಿ ಅಲ್ಲಿಗೆ ಹೋಗಲಾರದೆ, ಯೆಬೂಸಿಯನಾದ ಒರ್ನಾನನ ಕಣದಲ್ಲಿಯೇ ಬಲಿಯರ್ಪಿಸಿದನು.</verse>
				<verse number="30">ಆ ಕಾಲದಲ್ಲಿ ದಾವೀದನಿಗೆ ಸರ್ವೇಶ್ವರನಿಂದ ಸದುತ್ತರ ದೊರಕಿದ್ದರಿಂದ ಅವನು,</verse>
			</chapter>
			<chapter number="22">
				<verse number="1">“ಇದೇ ದೇವರಾದ ಸರ್ವೇಶ್ವರನ ಆಲಯ; ಇದೇ ಇಸ್ರಯೇಲರು ಬಲಿ ಅರ್ಪಿಸತಕ್ಕ ಪೀಠ,” ಎಂದು ಹೇಳಿದನು.</verse>
				<verse number="2">ಅನಂತರ ದಾವೀದನು ಇಸ್ರಯೇಲ್ ನಾಡಿನಲ್ಲಿದ್ದ ಅನ್ಯಜನಗಳನ್ನು ಕೂಡಿಸುವುದಕ್ಕೆ ಆಜ್ಞಾಪಿಸಿದನು. ಅವರಲ್ಲಿದ್ದ ಕಲ್ಲುಕುಟಿಗರನ್ನು ದೇವಾಲಯದ ಕಟ್ಟಡಕ್ಕಾಗಿ ಕಲ್ಲುಗಳನ್ನು ಕೆತ್ತುವುದಕ್ಕೆ ನೇಮಿಸಿದನು.</verse>
				<verse number="3">ಇದಲ್ಲದೆ, ಬಾಗಿಲುಗಳ ಕದಗಳಿಗೆ ಬೇಕಾದ ಮೊಳೆಗಳನ್ನು ಹಾಗು ಪಟ್ಟಿಗಳನ್ನು ಮಾಡುವುದಕ್ಕೆ ಬಹಳ ಕಬ್ಬಿಣವನ್ನೂ ತೂಕ ಮಾಡಲಾಗದಷ್ಟು ತಾಮ್ರವನ್ನೂ</verse>
				<verse number="4">ಎಣಿಸಲಾಗದಷ್ಟು ದೇವದಾರು ಮರಗಳನ್ನೂ ಸಿದ್ಧಪಡಿಸಿದನು; ಸಿದೋನ್ ಹಾಗು ಟೈರಿನ ಜನರು ಅವನಿಗೆ ದೇವದಾರು ಮರಗಳನ್ನು ಒದಗಿಸಿದರು.</verse>
				<verse number="5">ದಾವೀದನು ತನ್ನಲ್ಲೇ, “ನನ್ನ ಮಗ ಸೊಲೊಮೋನನು ಎಳೇ ಪ್ರಾಯದವನು. ಸರ್ವೇಶ್ವರನಿಗೆ ಕಟ್ಟಿಸತಕ್ಕ ದೇವಾಲಯವು, ಜಗತ್ತಿನಲ್ಲೆಲ್ಲಾ ಸುಪ್ರಸಿದ್ಧವಾಗಿರಬೇಕು; ಅದು ಅತಿ ಅದ್ಭುತಕರವಾಗಿರಬೇಕು; ಆದುದರಿಂದ ಅದಕ್ಕೆ ಬೇಕಾಗುವುದನ್ನೆಲ್ಲಾ ಸಿದ್ಧಪಡಿಸುವೆನು,” ಎಂದುಕೊಂಡನು. ಸಾಯುವುದಕ್ಕೆ ಮೊದಲೇ ಹಲವಾರು ಸಲಕರಣೆಗಳನ್ನು ದೊಡ್ಡ ಸಂಖ್ಯೆಯಲ್ಲಿ ಸಜ್ಜು ಮಾಡಿದನು.</verse>
				<verse number="6">ಆಮೇಲೆ ದಾವೀದನು ತನ್ನ ಮಗ ಸೊಲೊಮೋನನನ್ನು ಕರೆಯಿಸಿದನು. ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ದೇವಾಲಯವನ್ನು ಕಟ್ಟಬೇಕೆಂದು ಅವನಿಗೆ ಆಜ್ಞಾಪಿಸಿದನು:</verse>
				<verse number="7">ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ದೇವಾಲಯವನ್ನು ಕಟ್ಟಬೇಕೆಂದು ಮನಸ್ಸುಮಾಡಿದೆ.</verse>
				<verse number="8">ಆದರೆ ಸರ್ವೇಶ್ವರ ನನಗೆ, “ನೀನು ಬಹಳ ರಕ್ತವನ್ನು ಸುರಿಸಿದವನು; ಮಹಾಯುದ್ಧಗಳನ್ನು ನಡೆಸಿದವನು. ನೀನು ನನ್ನೆದುರಿನಲ್ಲಿ ಬಹಳ ರಕ್ತವನ್ನು ಸುರಿಸಿದ್ದರಿಂದ, ನನ್ನ ಹೆಸರಿಗಾಗಿ ಆಲಯವನ್ನು ಕಟ್ಟಬಾರದು.</verse>
				<verse number="9">ನಿನಗೆ ಒಬ್ಬ ಮಗ ಹುಟ್ಟುವನು; ಅವನು ಸಮಾಧಾನ ಪುರುಷನಾಗಿರುವನು. ನಾನು ಅವನ ಸುತ್ತಣ ಎಲ್ಲ ವಿರೋಧಿಗಳನ್ನು ಅಡಗಿಸಿ ಅವನಿಗೆ ಶಾಂತಿ ಸಮಾಧಾನವನ್ನು ಅನುಗ್ರಹಿಸುವೆನು. ಅವನಿಗೆ ಸೊಲೊಮೋನ ಎಂಬ ಹೆಸರಿರುವುದು. ಅವನ ಕಾಲದಲ್ಲಿ ಇಸ್ರಯೇಲರಿಗೆ ಶಾಂತಿಸಮಾಧಾನವನ್ನೂ ಸೌಭಾಗ್ಯವನ್ನೂ ದಯಪಾಲಿಸುವೆನು.</verse>
				<verse number="10">ಅವನೇ ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟುವನು. ಅವನು ನನಗೆ ಮಗನಾಗಿರುವನು. ನಾನು ಅವನಿಗೆ ತಂದೆಯಾಗಿರುವೆನು; ಇಸ್ರಯೇಲರಲ್ಲಿ ಅವನ ರಾಜ್ಯಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು,” ಎಂಬುದಾಗಿ ಹೇಳಿದರು.</verse>
				<verse number="11">“ನನ್ನ ಮಗನೇ, ನೀನು ಕೃತಾರ್ಥನಾಗಬೇಕು; ನಿನ್ನ ದೇವರಾದ ಸರ್ವೇಶ್ವರ ನನ್ನ ವಿಷಯದಲ್ಲಿ ಮಾಡಿದ ವಾಗ್ದಾನದ ಪ್ರಕಾರ ನೀನು ದೇವಾಲಯವನ್ನು ಕಟ್ಟಬೇಕು. ಆ ಸರ್ವೇಶ್ವರ ನಿನ್ನೊಂದಿಗಿರಲಿ!</verse>
				<verse number="12">ನೀನು ನಿನ್ನ ದೇವರಾದ ಸರ್ವೇಶ್ವರನ ಧರ್ಮಶಾಸ್ತ್ರವನ್ನು ಕೈಗೊಳ್ಳುವಂತೆ ಅವರು ನಿನಗೆ ಜ್ಞಾನವಿವೇಕಗಳನ್ನು ದಯಪಾಲಿಸಲಿ! ಇಸ್ರಯೇಲರನ್ನು ಆಳುವುದಕ್ಕೆ ನಿನ್ನನ್ನು ನೇಮಿಸಲಿ!</verse>
				<verse number="13">ಮೋಶೆಯ ಮುಖಾಂತರ ಸರ್ವೇಶ್ವರ ಇಸ್ರಯೇಲರಿಗೆ ಕೊಟ್ಟ ನ್ಯಾಯವಿಧಿಗಳನ್ನು ನೀನು ಕೈಗೊಳ್ಳುವುದಾದರೆ ಸಫಲನಾಗುವೆ. ಸ್ಥಿರಚಿತ್ತನಾಗಿರು, ಧೈರ್ಯದಿಂದ ಇರು; ಅಂಜಬೇಡ, ಕಳವಳಗೊಳ್ಳಬೇಡ.</verse>
				<verse number="14">ಇಗೋ, ನಾನು ಬಹಳ ಪ್ರಯಾಸಪಟ್ಟು ಸರ್ವೇಶ್ವರನ ಆಲಯಕ್ಕಾಗಿ 3,400 ಮೆಟ್ರಿಕ್ ಟನ್ ಬಂಗಾರವನ್ನು 34,000 ಮೆಟ್ರಿಕ್ ಟನ್ ಬೆಳ್ಳಿಯನ್ನು ಹಾಗು ಲೆಕ್ಕವಿಲ್ಲದಷ್ಟು ತಾಮ್ರ, ಕಬ್ಬಿಣ, ಕಲ್ಲುಮರಗಳನ್ನೂ ಕೂಡಿಸಿದ್ದೇನೆ.</verse>
				<verse number="15">ನೀನು ಇನ್ನೂ ಹೆಚ್ಚು ಕೂಡಿಸುವೆ. ಇದಲ್ಲದೆ, ಕಟ್ಟುವ ಕೆಲಸಕ್ಕಾಗಿ ಬೇಕಾದಷ್ಟು ಮಂದಿ ಕಲ್ಲುಕುಟಿಗರು, ಶಿಲ್ಪಿಗಳು, ಬಡಗಿಯವರು ಹಾಗು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ ಈ ಮುಂತಾದ ಕೆಲಸವನ್ನು ಮಾಡುವ ನಿಪುಣರು ನಿನಗಿರುತ್ತಾರೆ; ಅವರನ್ನು ಲೆಕ್ಕಿಸುವುದಕ್ಕಾಗುವುದಿಲ್ಲ.</verse>
				<verse number="16">ಏಳು, ಕೆಲಸಕ್ಕೆ ಕೈಹಾಕು; ಸರ್ವೇಶ್ವರ ನಿನ್ನೊಂದಿಗಿರಲಿ!” ಎಂದು ಹೇಳಿದನು.</verse>
				<verse number="17">ತನ್ನ ಮಗ ಸೊಲೊಮೋನನಿಗೆ ನೆರವಾಗಬೇಕೆಂದು ಇಸ್ರಯೇಲರ ಎಲ್ಲ ಅಧಿಪತಿಗಳಿಗೆ ದಾವೀದನು ಅಜ್ಞಾಪಿಸಿದನು.</verse>
				<verse number="18">“ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂಗಡ ಇದ್ದು ಎಲ್ಲಾ ಕಡೆಗಳಲ್ಲೂ ನಿಮಗೆ ನೆಮ್ಮದಿಯನ್ನು ಅನುಗ್ರಹಿಸಿದ್ದಾರೆ. ನಾಡಿನ ಮೂಲ ನಿವಾಸಿಗಳನ್ನು ನನ್ನ ಕೈಗೊಪ್ಪಿಸಿದ್ದಾರೆ. ನೀವೆ ನೋಡುವ ಹಾಗೆ ನಾಡು ಸರ್ವೇಶ್ವರನಿಗೂ ಅವರ ಪ್ರಜೆಗಳಿಗೂ ಸ್ವಾಧೀನವಾಗಿದೆ.</verse>
				<verse number="19">ಆದುದರಿಂದ ನೀವು ಪೂರ್ಣಮನಸ್ಸಿನಿಂದ, ಪೂರ್ಣಪ್ರಾಣದಿಂದ ನಿಮ್ಮ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸಿರಿ. ಏಳಿ, ನಿಮ್ಮ ದೇವರಾದ ಸರ್ವೇಶ್ವರನ ನಿಬಂಧನ ಮಂಜೂಷವನ್ನೂ ದೇವಾರಾಧನೆಗೆ ಬೇಕಾದ ಸಾಮಗ್ರಿಗಳನ್ನೂ ಸರ್ವೇಶ್ವರನ ಹೆಸರಿಗಾಗಿ ಕಟ್ಟಲಾಗುವ ಮಂದಿರದಲ್ಲಿ ಇಡಿ,” ಎಂದು ಹೇಳಿದನು.</verse>
			</chapter>
			<chapter number="23">
				<verse number="1">ದಾವೀದನು ಹಣ್ಣುಹಣ್ಣು ಮುದುಕನಾದಾಗ ತನ್ನ ಮಗ ಸೊಲೊಮೋನನನ್ನು ಇಸ್ರಯೇಲರ ಅರಸನನ್ನಾಗಿ ಮಾಡಿದನು.</verse>
				<verse number="2">ಆಗ ಇಸ್ರಯೇಲರ ಎಲ್ಲಾ ಅಧಿಪತಿಗಳನ್ನು, ಯಾಜಕರನ್ನು ಹಾಗು ಲೇವಿಯರನ್ನು ತನ್ನ ಬಳಿಯಲ್ಲಿ ಸಭೆ ಸೇರಿಸಿದನು.</verse>
				<verse number="3">ಮೂವತ್ತು ವರ್ಷ ಮೊದಲ್ಗೊಂಡು ಹೆಚ್ಚಾದ ವಯಸ್ಸುಳ್ಳ ಲೇವಿಯರನ್ನು ಲೆಕ್ಕಿಸಿದಾಗ ಗಂಡಸರ ಸಂಖ್ಯೆ ಮೂವತ್ತೆಂಟು ಸಾವಿರವಿತ್ತು.</verse>
				<verse number="4">ಇವರಲ್ಲಿ ಸರ್ವೇಶ್ವರನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗಾಗಿ ಇಪ್ಪತ್ತನಾಲ್ಕು ಸಾವಿರ, ನ್ಯಾಯಾಧಿಪತಿಗಳನ್ನಾಗಿ ಮತ್ತು ಅಧಿಕಾರಿಗಳನ್ನಾಗಿ ಆರು ಸಾವಿರ,</verse>
				<verse number="5">ದ್ವಾರಪಾಲಕರನ್ನಾಗಿ ನಾಲ್ಕು ಸಾವಿರ ಹಾಗು ತಾನು ಒದಗಿಸಿದ್ದ ವಾದ್ಯಗಳಿಂದ ಸರ್ವೇಶ್ವರನನ್ನು ಭಜಿಸುವುದಕ್ಕಾಗಿ ನಾಲ್ಕು ಸಾವಿರ ಜನರನ್ನು ದಾವೀದನು ನೇಮಿಸಿದನು.</verse>
				<verse number="6">ಇದಲ್ಲದೆ, ಆ ಲೇವಿಯರನ್ನು ಗೇರ್ಷೋನ್ಯರು,ಮಕೆಹಾತ್ಯರು, ಮೆರಾರೀಯರು ಎಂಬ ಮೂರು ವರ್ಗಗಳಾಗಿ ವಿಂಗಡಿಸಿದನು.</verse>
				<verse number="7">ಗೇರ್ಷೋನ್ಯರ ಮೂಲಪುರುಷರು ಲದ್ದಾನ್ ಹಾಗೂ ಶಿಮ್ಮೀ ಎಂಬವರು.</verse>
				<verse number="8">ಲದ್ದಾನನ ಮಕ್ಕಳಾದ ಯೆಹೀಯೇಲ್, ಜೇತಾಮ್, ಯೋವೇಲ್ ಎಂಬ ಮೂರು ಮಂದಿ ಮುಖ್ಯಸ್ಥರಾಗಿದ್ದರು.</verse>
				<verse number="9">ಶಿಮ್ಮೀಯ ಮಕ್ಕಳು ಶೆಲೋಮೋತ್, ಹಜೀಯೇಲ್, ಹಾರಾನ್ ಎಂಬ ಮೂರು ಮಂದಿ. ಇವರು ಲದ್ದಾನ್ಯರ ಗೋತ್ರ ಪ್ರಧಾನರು.</verse>
				<verse number="10">ಶಿಮ್ಮೀಗೆ ಯಹತ್, ಜೀನ, ಯೆಯೂಷ್, ಬೆರೀಯ ಎಂಬ ನಾಲ್ಕು ಮಂದಿ ಮಕ್ಕಳಿದ್ದರು.</verse>
				<verse number="11">ಇವರಲ್ಲಿ ಯಹತನು ಮುಖ್ಯಸ್ಥನು. ಜೀಜನು ಎರಡನೆಯವನು. ಯೆಯೂಷ್, ಬೆರೀಯರಿಗೆ ಬಹಳ ಮಂದಿ ಮಕ್ಕಳು ಇರಲಿಲ್ಲವಾದ್ದರಿಂದ ಅವರಿಬ್ಬರೂ ಒಂದೇ ಕುಟುಂಬ ಹಾಗೂ ವರ್ಗವಾಗಿ ಎಣಿಕೆಯಾಗಿದ್ದರು.</verse>
				<verse number="12">ಕೆಹಾತನಿಗೆ ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್ ಎಂಬ ನಾಲ್ಕು ಮಂದಿ ಮಕ್ಕಳಿದ್ದರು.</verse>
				<verse number="13">ಅಮ್ರಾಮನ ಮಕ್ಕಳು ಆರೋನ್, ಮೋಶೆ ಎಂಬವರು. ಆರೋನನೂ ಅವನ ಸಂತಾನದವರೂ ಮಹಾಪರಿಶುದ್ಧ ವಸ್ತುಗಳನ್ನು ಪ್ರತಿಷ್ಠಿಸುವುದಕ್ಕೆ ಪ್ರತ್ಯೇಕಿಸಲ್ಪಟ್ಟಿದ್ದರು. ಇವರು ಸರ್ವೇಶ್ವರನ ಸನ್ನಿಧಿಯಲ್ಲಿ ಸದಾ ಧೂಪಾರತಿ ಎತ್ತುವವರೂ ಸೇವೆ ಮಾಡುವವರೂ ಸರ್ವೇಶ್ವರನ ಹೆಸರಿನಿಂದ ಜನರನ್ನು ಆಶೀರ್ವದಿಸುವವರೂ ಆಗಿರಬೇಕಿತ್ತು.</verse>
				<verse number="14">ದೈವಪುರುಷನಾದ ಮೋಶೆಯ ಸಂತಾನದವರು ಸಾಧಾರಣ ಲೇವಿಯರೊಳಗೆ ಲೆಕ್ಕಿತರಾಗಿದ್ದರು.</verse>
				<verse number="15">ಮೋಶೆಯ ಮಕ್ಕಳು ಗೇರ್ಷೋಮ್ ಹಾಗೂ ಎಲೀಯೆಜೆರ್ ಎಂಬವರು.</verse>
				<verse number="16">ಮುಖ್ಯಸ್ಥನಾದ ಶೆಬೂವೇಲನು ಗೇರ್ಷೋಮನ ಮಗ.</verse>
				<verse number="17">ಮುಖ್ಯಸ್ಥನಾದ ರೆಹಬ್ಯ ಎಲೀಯೆಜೆರನ ಮಗ. ಎಲೀಯೆಜೆರನಿಗೆ ಬೇರೆ ಮಕ್ಕಳಿರಲಿಲ್ಲ. ಆದರೆ ರೆಹಬ್ಯನಿಗೆ ಅನೇಕ ಮಂದಿ ಮಕ್ಕಳಿದ್ದರು.</verse>
				<verse number="18">ಮುಖ್ಯಸ್ಥ ಶೆಲೋಮೋತನು ಇಚ್ಹಾರನ ಮಗ.</verse>
				<verse number="19">ಹೆಬ್ರೋನನ ಮಕ್ಕಳಲ್ಲಿ ಯೇರಿಯ ಮುಖ್ಯಸ್ಥ; ಅಮರ್ಯ ಎರಡನೆಯವನು, ಯಹಜೀಯೇಲ್ ಮೂರನೆಯವನು, ಯೆಕಮ್ಮಾಮ್ ನಾಲ್ಕನೆಯವನು.</verse>
				<verse number="20">ಉಜ್ಜೀಯೇಲನ ಮಕ್ಕಳಲ್ಲಿ ಮೀಕನೂ ಮುಖ್ಯಸ್ಥ; ಇಷೀಯನು ಎರಡನೆಯವನು.</verse>
				<verse number="21">ಮೆರಾರೀಯ ಮಕ್ಕಳು ಮಹ್ಲೀ ಹಾಗೂ ಮೂಷೀ ಎಂಬವರು. ಮಹ್ಲೀಯ ಮಕ್ಕಳು ಎಲ್ಲಾಜಾರ್ ಹಾಗೂ ಕೀಷ್ ಇವರು.</verse>
				<verse number="22">ಎಲ್ಲಾಜಾರನು ಗಂಡುಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣುಮಕ್ಕಳು ಮಾತ್ರ ಇದ್ದರು; ಇವರು ತಮ್ಮ ಬಂಧುಗಳಾದ ಕೀಷನ ಮಕ್ಕಳನ್ನು ಮದುವೆಯಾದರು.</verse>
				<verse number="23">ಮೂಷಿಗೆ ಮೆಹ್ಲೀ, ಏದೆರ್, ಯೆರೇಮೋತ್ ಎಂಬ ಮೂರು ಮಂದಿ ಮಕ್ಕಳಿದ್ದರು.</verse>
				<verse number="24">ಲೇವಿಯರ ಪಟ್ಟಿಯಲ್ಲಿ ಬರೆದಿರುವ ಹೆಸರುಗಳ ಪ್ರಕಾರ ಇವರೇ ಆಯಾ ಲೇವಿ ವರ್ಗಗಳ ಕುಟುಂಬದ ಮುಖ್ಯಸ್ಥರು. ಇವರಲ್ಲಿ ಇಪ್ಪತ್ತು ವರ್ಷ ಮೊದಲ್ಗೊಂಡು ಹೆಚ್ಚು ವಯಸ್ಸುಳ್ಳವರು ಸರ್ವೇಶ್ವರನ ಆಲಯದಲ್ಲಿ ಸೇವೆಮಾಡಲು ಅರ್ಹರಾಗಿದ್ದರು.</verse>
				<verse number="25">ಇಸ್ರಯೇಲ್ ದೇವರಾದ ಸರ್ವೇಶ್ವರ, ತಮ್ಮ ಪ್ರಜೆಗೆ ನೆಮ್ಮದಿಯನ್ನು ಅನುಗ್ರಹಿಸಿ, ಸದಾ ಜೆರುಸಲೇಮಿನಲ್ಲಿ ವಾಸಿಸುವವರಾದ ಕಾರಣ,</verse>
				<verse number="26">ಲೇವಿಯರು ಇನ್ನು ಮುಂದೆ ಅವರ ಗುಡಾರವನ್ನೂ ಆರಾಧನಾ ಸಾಮಗ್ರಿಗಳನ್ನೂ ಹೊರುವುದು ಅವಶ್ಯವಿಲ್ಲವೆಂದುಕೊಂಡು, ದಾವೀದನು ಈ ಪ್ರಕಾರ ವಿಧಿಸಿದನು:</verse>
				<verse number="27">ದಾವೀದನ ಈ ಕಡೇ ಆಜ್ಞೆಯ ಮೇರೆಗೆ ಲೇವಿಯರಲ್ಲಿ ಇಪ್ಪತ್ತು ವರ್ಷ ಮೊದಲ್ಗೊಂಡು ಹೆಚ್ಚು ವಯಸ್ಸುಳ್ಳವರೆಲ್ಲರೂ ಲೆಕ್ಕಿಸಲ್ಪಟ್ಟರು.</verse>
				<verse number="28">ಅವರು ಆರೋನ್ಯರ ಕೈಕೆಳಗಿದ್ದುಕೊಂಡು ಸರ್ವೇಶ್ವರನ ಆಲಯದ ಪರಿಚರ್ಯೆಯನ್ನು ನಡೆಸಬೇಕಾಗಿತ್ತು. ಅವರ ಕೆಲಸ ಕಾರ್ಯ ಇವು: ಅಂಗಳವನ್ನೂ ಅಲ್ಲಿಯ ಕೋಣೆಗಳನ್ನು ನೋಡಿಕೊಳ್ಳುವುದು, ದೇವಾಲಯಕ್ಕೆ ಸಂಬಂಧಪಟ್ಟವುಗಳನ್ನೆಲ್ಲಾ ಶುದ್ಧಮಾಡುವುದು, ದೇವಾಲಯದಲ್ಲಿ ಸೇವೆಮಾಡುವುದು;</verse>
				<verse number="29">ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯ ಇವುಗಳನ್ನು ಒದಗಿಸುವುದು; ಸೇರು, ಅಳತೆಗೋಲು ಇವುಗಳನ್ನು ಪರೀಕ್ಷಿಸುವುದು;</verse>
				<verse number="30">ಪ್ರತಿದಿನ ಬೆಳಿಗ್ಗೆ, ಸಂಜೆ ಮತ್ತು ನಿಯಮಿತ ಸಂಖ್ಯೆಗೆ ಸರಿಯಾಗಿ ಸಬ್ಬತ್ ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ, ಸರ್ವೇಶ್ವರನ ಮುಂದೆ ತಪ್ಪದೆ ನಡೆಯುವ ದಹನಬಲಿ ಸಮರ್ಪಣೆಯ ಹೊತ್ತಿನಲ್ಲಿ, ಸರ್ವೇಶ್ವರನಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸುವುದು.</verse>
				<verse number="31"></verse>
				<verse number="32">ಹೀಗೆ ಅವರು ತಮ್ಮ ಸಹೋದರರಾದ ಆರೋನ್ಯರ ಸಹಾಯಕರಾಗಿದ್ದು, ದೇವದರ್ಶನದ ಗುಡಾರವನ್ನೂ ಪರಿಶುದ್ಧವಾದ ಎಲ್ಲಾ ಸಾಮಾನುಗಳನ್ನೂ ನೋಡಿಕೊಳ್ಳುವುದೇ ಸರ್ವೇಶ್ವರನ ಆಲಯದಲ್ಲಿ ಅವರು ಮಾಡಬೇಕಾಗಿದ್ದ ಪರಿಚರ್ಯೆ.</verse>
			</chapter>
			<chapter number="24">
				<verse number="1">ಆರೋನನ ಸಂತಾನದವರನ್ನು ವರ್ಗಗಳಾಗಿ ವಿಂಗಡಿಸಲಾಗಿತ್ತು. ಆರೋನನಿಗೆ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬ ನಾಲ್ವರು ಮಕ್ಕಳಿದ್ದರು.</verse>
				<verse number="2">ನಾದಾಬ್, ಅಬೀಹೂ ಎಂಬವರು ಮಕ್ಕಳಿಲ್ಲದೆ ತಮ್ಮ ತಂದೆಗಿಂತ ಮೊದಲೇ ಸತ್ತುಹೋದುದರಿಂದ ಎಲ್ಲಾಜಾರ್ ಈತಾಮಾರರು ಯಾಜಕ ಉದ್ಯೋಗವನ್ನು ನಡೆಸುತ್ತಿದ್ದರು.</verse>
				<verse number="3">ದಾವೀದನೂ ಎಲ್ಲಾಜಾರನ ಸಂತಾನದವನಾದ ಚಾದೋಕನೂ ಈತಾಮಾರನ ಸಂತಾನದವನಾದ ಅಹೀಮೆಲೆಕನೂ ಯಾಜಕರನ್ನು ಸರದಿಯ ಮೇಲೆ ಸೇವೆ ಸಲ್ಲಿಸತಕ್ಕ ವರ್ಗಗಳನ್ನಾಗಿ ವಿಭಾಗಿಸಿದ್ದರು.</verse>
				<verse number="4">ಎಲ್ಲಾಜಾರನ ಸಂತಾನದಲ್ಲಿ ಕುಟುಂಬ ಮುಖ್ಯಸ್ಥರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡುಬಂದುದರಿಂದ, ಎಲ್ಲಾಜಾರ್ಯರ ಕುಟುಂಬಗಳನ್ನು ಮುಖ್ಯಸ್ಥರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ,</verse>
				<verse number="5">ಈ ವರ್ಗಗಳ ವಿಷಯವಾಗಿ ಚೀಟುಹಾಕಿ ಕೆಲಸವನ್ನು ವಹಿಸುತ್ತಿದ್ದರು. ಎಲ್ಲಾಜಾರನ ಸಂತಾನದವರಲ್ಲಿ ಹೇಗೋ ಹಾಗೆಯೇ ಈತಾಮಾರನ ಸಂತಾನದವರಲ್ಲಿಯೂ ಪವಿತ್ರಾಯಲಯದ ಅಧಿಪತಿಗಳೂ ದೈವಿಕ ಕಾರ್ಯಗಳ ಅಧ್ಯಕ್ಷರೂ ಇದ್ದುದರಿಂದ ಉಭಯ ಸಂತಾನಗಳವರು ಸಮಾನ ಸ್ಥಾನದವರಾಗಿದ್ದರು.</verse>
				<verse number="6">ನೆತನೇಲನ ಮಗ ಶೆಮಾಯನೆಂಬ ಲೇವಿಯ ಲೇಖಕನು, ಅರಸನ ಮುಂದೆ, ಅಧಿಪತಿಗಳ ಮುಂದೆ ಹಾಗೂ ಯಾಜಕನಾದ ಚಾದೋಕ್, ಎಬ್ಯಾತಾರನ ಮಗ ಅಹೀಮೆಲೆಕ್, ಯಾಜಕರ ಮತ್ತು ಲೇವಿಯರ ಕುಟುಂಬಗಳ ಮುಖ್ಯಸ್ಥರ ಮುಂದೆ, ಆ ವರ್ಗಗಳ ಪಟ್ಟಿಯನ್ನು ಬರೆಯುತ್ತಿದ್ದನು. ಎಲ್ಲಾಜಾರ್ಯರ ಒಂದು ವರ್ಗದವರ ಸರದಿ ಆದ ನಂತರ ಈತಾಮಾರ್ಯರ ಒಂದು ವರ್ಗದವರು ಸೇವೆಸಲ್ಲಿಸಬೇಕೆಂದು ನೇಮಿಸಿ, ಎಲ್ಲಾ ವರ್ಗಗಳ ಸರದಿಯನ್ನು ಚೀಟಿನಿಂದಲೇ ಗೊತ್ತುಮಾಡುತ್ತಿದ್ದರು.</verse>
				<verse number="7">ಮೊದಲನೆಯ ಚೀಟು ಯೆಹೋಯಾರೀಬನಿಗೆ ಬಿದ್ದಿತು;</verse>
				<verse number="8">ಎರಡನೆಯದು ಯೆದಾಯನಿಗೆ; ಮೂರನೆಯದು ಹಾರೀಮನಿಗೆ;</verse>
				<verse number="9">ನಾಲ್ಕನೆಯದು ಸೆಯೋರೀಮನಿಗೆ; ಐದನೆಯದು ಮಲ್ಕೀಯನಿಗೆ; ಆರನೆಯದು ಮಿಯ್ಯಾಮೀನನಿಗೆ;</verse>
				<verse number="10">ಏಳನೆಯದು ಹಕ್ಕೋಚನಿಗೆ; ಎಂಟನೆಯದು ಅಬೀಯನಿಗೆ;</verse>
				<verse number="11">ಒಂಬತ್ತನೆಯದು ಯೆಷೂವನಿಗೆ;</verse>
				<verse number="12">ಹತ್ತನೆಯದು ಶೆಕನ್ಯನಿಗೆ; ಹನ್ನೊಂದನೆಯದು ಎಲ್ಯಾಷೀಬನಿಗೆ;</verse>
				<verse number="13">ಹನ್ನೆರಡನೆಯದು ಯಾಕೀಮನಿಗೆ; ಹದಿಮೂರನೆಯದು ಹುಪ್ಪನಿಗೆ; ಹದಿನಾಲ್ಕನೆಯದು ಎಫೆಬಾಬನಿಗೆ;</verse>
				<verse number="14">ಹದಿನೈದನೆಯದು ಬಿಲ್ಗನಿಗೆ; ಹದಿನಾರನೆಯದು ಇಮ್ಮೇರನಿಗೆ;</verse>
				<verse number="15">ಹದಿನೇಳನೆಯದು ಹೇಜಿರನಿಗೆ;</verse>
				<verse number="16">ಹದಿನೆಂಟನೆಯದು ಹಪ್ಪಿಚ್ಚೇಚನಿಗೆ; ಹತ್ತೊಂಬತ್ತನೆಯದು ಪೆತಹ್ಯನಿಗೆ; ಇಪ್ಪತ್ತನೆಯದು ಯೆಹೆಜ್ಕೇಲನಿಗೆ;</verse>
				<verse number="17">ಇಪ್ಪತ್ತೊಂದನೆಯದು ಯಾಕೀನನಿಗೆ; ಇಪ್ಪತ್ತೆರಡನೆಯದು ಗಾಮೂಲನಿಗೆ;</verse>
				<verse number="18">ಇಪ್ಪತ್ತಮೂರನೆಯದು ದೆಲಾಯನಿಗೆ; ಇಪ್ಪತ್ತನಾಲ್ಕನೆಯದು ಮಾಜ್ಯನಿಗೆ.</verse>
				<verse number="19">ಆರೋನ್ಯರು ಈ ವರ್ಗಕ್ರಮದಲ್ಲಿ ಸರ್ವೇಶ್ವರನ ಆಲಯಕ್ಕೆ ಬಂದು, ಲೇವಿಯರ ಮೂಲ ಪುರುಷನಾದ ಆರೋನನ ಮುಖಾಂತರ ಇಸ್ರಯೇಲ್ ದೇವರಾದ ಸರ್ವೇಶ್ವರ ನಿಯಮಿಸಿದ ಸೇವೆಯನ್ನು ನಡೆಸಬೇಕಾಗಿತ್ತು.</verse>
				<verse number="20">ಉಳಿದ ಲೇವಿಯರ ಪಟ್ಟಿ: ಅಮ್ರಾಮನ ಸಂತಾನದವನಾದ ಶೂಬಾಯೇಲನ ಕುಟುಂಬದವರಲ್ಲಿ ಯೆಹ್ದೆಯಾಹನು,</verse>
				<verse number="21">ರೆಹಬ್ಯನ ಸಂತಾನದವರಲ್ಲಿ ಇಷ್ಷೀಯನು,</verse>
				<verse number="22">ಹಾಗೂ ಇಚ್ಚಾರನ ಸಂತಾನದವನಾದ ಶೆಲೋಮೋತನ ಕುಟುಂಬದವರಲ್ಲಿ ಯಹತನು ಮುಖ್ಯಸ್ಥರು.</verse>
				<verse number="23">ಹೆಬ್ರೋನನ ಸಂತಾನದವರಲ್ಲಿ, ಯೆರೀಯನು ಮುಖ್ಯಸ್ಥನು, ಅಮರ್ಯನು ಎರಡನೆಯವನು, ಯೆಹಜೀಯೇಲನು ಮೂರನೆಯವನು, ಯೆಕಮ್ಮಾಮನು ನಾಲ್ಕನೆಯವನು.</verse>
				<verse number="24">ಉಜ್ಜಿಯೇಲನ ಮಗ ಮೀಕನ ಸಂತಾನದವರಲ್ಲಿ ಶಾಮೀರನು</verse>
				<verse number="25">ಹಾಗೂ ಮೀಕನ ತಮ್ಮನಾದ ಇಷ್ಷೀಯನ ಸಂತಾನದವರಲ್ಲಿ ಜೆಕರ್ಯನು ಮುಖ್ಯಸ್ಥರು.</verse>
				<verse number="26">ಮೆರಾರೀಯ ಮಕ್ಕಳು ಮಹ್ಲೀ ಮತ್ತು ಮೂಷೀ ಎಂಬವರು ಹಾಗೂ ಅವನ ಮತ್ತೊಬ್ಬ ಮಗ ಯಾಜ್ಯನ ವಂಶದವರು.</verse>
				<verse number="27">ಮೆರಾರೀಯ ಸಂತಾನದವರಲ್ಲಿ ಯಾಜ್ಯನಿಂದ ಹುಟ್ಟಿದವರು ಬೆನೋ, ಶೋಹಮ್, ಜಕ್ಕೂರ್, ಇಬ್ರೀ ಇವರು.</verse>
				<verse number="28">ಮಹ್ಲೀಯಿಂದ ಹುಟ್ಟಿದವರು: ಮಕ್ಕಳಿಲ್ಲದೆ ಸತ್ತ ಎಲ್ಲಾಜಾರನು ಹಾಗು ಕೀಷನು.</verse>
				<verse number="29">ಕೀಷನಿಂದ ಯೆರಹ್ಮೇಲನು ಹುಟ್ಟಿದನು.</verse>
				<verse number="30">ಮೂಷೀಯ ಮಕ್ಕಳು: ಮಹ್ಲೀ, ಏದೆರ್, ಯೆರೀಮೋತ್ ಎಂಬವರು.</verse>
				<verse number="31">ಇವರೆಲ್ಲಾ ಲೇವಿ ಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ ಕಿರಿಯರೂ, ತಮ್ಮ ಕುಲಬಂಧುಗಳಾದ ಆರೋನ್ಯರಂತೆ, ಅರಸನಾದ ದಾವೀದ್, ಚಾದೋಕ್, ಅಹೀಮೆಲೆಕ್ ಇವರ ಮುಂದೆ ಹಾಗೂ ಯಾಜಕರ ಮತ್ತು ಲೇವಿಯರ ಕುಟುಂಬ ಮುಖ್ಯಸ್ಥರ ಮುಂದೆ, ಚೀಟಿನಿಂದ ತಮ್ಮಲ್ಲಿ ಸರದಿಗಳನ್ನು ನೇಮಿಸಿಕೊಂಡರು.</verse>
			</chapter>
			<chapter number="25">
				<verse number="1">ದಾವೀದನು ಹಾಗೂ ಆರಾಧಕ ಮಂಡಲಿಯ ಮುಖ್ಯಸ್ಥರು ಕಿನ್ನರಿ, ಸ್ವರಮಂಡಲ, ತಾಳ ಇವುಗಳನ್ನು ಬಾರಿಸುತ್ತಾ, ಪರವಶರಾಗಿ ಗಾಯನ ಸೇವೆ ಮಾಡುವುದಕ್ಕಾಗಿ ಆಸಾಫ್ಯರನ್ನೂ ಹೇಮಾನ್ಯರನ್ನೂ ಯೆದುತೂನ್ಯರನ್ನೂ ಆರಿಸಿದರು. ಈ ಸೇವೆಯನ್ನು ಮಾಡಬೇಕಾಗಿದ್ದ ಪುರುಷರ ಪಟ್ಟಿ:</verse>
				<verse number="2">ಆಸಾಫ್ಯರಲ್ಲಿ ಜಕ್ಕೂರ್, ಜೋಸೆಫ್, ನೆತನ್ಯ, ಅಶರೇಲ ಎಂಬವರು. ಇವರು ಆಸ್ಥಾನದ ಗಾಯಕ ಆಸಾಫನ ಸಹಾಯಕರು.</verse>
				<verse number="3">ಯೆದುತೂನ್ಯರಲ್ಲಿ ಗೆದಲ್ಯ, ಚೆರೀ, ಯೆಶಾಯ, ಶಿಮ್ಮೀ, ಹಷಬ್ಯ, ಮತ್ತಿತ್ಯ. ಇವರು ಕಿನ್ನರಿಯನ್ನು ಬಾರಿಸುತ್ತಾ ಪರವಶರಾಗಿ, ಸರ್ವೇಶ್ವರನ ಕೀರ್ತನೆ ಮಾಡುವ ತಮ್ಮ ತಂದೆಯಾದ ಯೆದುತೂನನಿಗೆ ಈ ಆರು ಮಂದಿ ಸಹಾಯಕರು.</verse>
				<verse number="4">ಹೇಮಾನ್ಯರಲ್ಲಿ ಬುಕ್ಕೀಯ, ಮತ್ತನ್ಯ, ಉಜ್ಜೀಯೇಲ್, ಶೆಬೂವೇಲ್, ಯೆರೀಮೋತ್, ಹನನ್ಯ, ಹನಾನೀ, ಎಲೀಯಾತ, ಗಿದ್ದಲ್ತಿ, ರೋಮಮ್ತಿಯೆಜೆರ್, ಯೊಷ್ಬೆಕಾಷ, ಮಲ್ಲೋತೀ, ಹೋತೀರ್, ಮಹಜೀಯೋತ್,</verse>
				<verse number="5">ಇವರೆಲ್ಲರೂ ಅರಸನ ದರ್ಶಿಯಾದ ಹೇಮಾನನ ಮಕ್ಕಳು. ದೇವರು ಅವನಿಗೆ, “ನೀನು ಅಭಿವೃದ್ಧಿಯಾಗುವ ಹಾಗೆ ಮಾಡುವೆನು,” ಎಂಬುದಾಗಿ ವಾಗ್ದಾನ ಮಾಡಿದ್ದರು. ಅದರಂತೆಯೇ ಅವನಿಗೆ ಹದಿನಾಲ್ಕು ಮಂದಿ ಗಂಡುಮಕ್ಕಳನ್ನೂ ಮೂರು ಮಂದಿ ಹೆಣ್ಣುಮಕ್ಕಳನ್ನೂ ದಯಪಾಲಿಸಿದರು.</verse>
				<verse number="6">ದೇವರಾದ ಸರ್ವೇಶ್ವರನ ಆಲಯದಲ್ಲಿ ಆರಾಧನೆ ನಡೆಯುತ್ತಿರುವಾಗ ಇವರೆಲ್ಲರೂ ತಮ್ಮ ತಂದೆಯ ನೇತೃತ್ವದಲ್ಲಿ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಗಾಯನ ಮಾಡುತ್ತಿದ್ದರು. ಆಸಾಫ್, ಯೆದುತೂನ್, ಹೇಮಾನರು ಅರಸನ ಸೇವೆಯಲ್ಲಿದ್ದರು.</verse>
				<verse number="7">ಇವರೂ ಸರ್ವೇಶ್ವರನ ಕೀರ್ತನೆಗಳನ್ನು ಕಲಿತ ಇವರ ಸಹೋದರರೂ ಒಟ್ಟು ಇನ್ನೂರ ಎಂಬತ್ತೆಂಟು ಮಂದಿ ಗಾಯನಪ್ರವೀಣರು ಇದ್ದರು.</verse>
				<verse number="8">ಇವರಲ್ಲಿ ಹಿರಿಕಿರಿಯರೂ ಗುರುಶಿಷ್ಯರೂ ಕೂಡಿಕೊಂಡು ಚೀಟಿನಿಂದ ತಮ್ಮ ಸೇವಾಕ್ರಮವನ್ನು ಗೊತ್ತುಮಾಡಿಕೊಳ್ಳುತ್ತಿದ್ದರು. ಈ ಚೀಟಿನ ಪ್ರಕಾರ ಇನ್ನೂರ ಎಂಬತ್ತೆಂಟು ಮಂದಿ ಸದಸ್ಯರು ಇಪ್ಪತ್ತನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದ್ದರು. ಪ್ರತಿಯೊಂದು ಗುಂಪಿಗೆ ಒಬ್ಬ ನಾಯಕನು, ಅವನ ಸಹೋದರರು ಹಾಗೂ ಮಕ್ಕಳು ಕೂಡಿ ಹನ್ನೆರಡು ಮಂದಿ ಸದಸ್ಯರು ಇದ್ದರು. ಕ್ರಮಾನುಸಾರ ಇಪ್ಪತ್ತನಾಲ್ಕು ನಾಯಕರ ಹೆಸರುಗಳು ಇವು:</verse>
				<verse number="9">ಮೊದಲನೆಯವನು ಆಸಾಫ್ಯನಾದ ಜೋಸೆಫನು; ಎರಡನೆಯವನು ಗೆದಲ್ಯ</verse>
				<verse number="10">ಮೂರನೆಯವನು ಜಕ್ಕೂರ್</verse>
				<verse number="11">ನಾಲ್ಕನೆಯವನು ಇಚ್ರೀ</verse>
				<verse number="12">ಐದನೆಯವನು ನೆತನ್ಯ</verse>
				<verse number="13">ಆರನೆಯವನು ಬುಕ್ಕೀಯ</verse>
				<verse number="14">ಏಳನೆಯವನು ಯೆಸರೇಲ</verse>
				<verse number="15">ಎಂಟನೆಯವನು ಯೆಶಾಯ</verse>
				<verse number="16">ಒಂಬತ್ತನೆಯವನು ಮತ್ತನ್ಯ</verse>
				<verse number="17">ಹತ್ತನೆಯವನು ಶಿಮ್ಮೀ</verse>
				<verse number="18">ಹನ್ನೊಂದನೆಯವನು ಅಜರೇಲ್</verse>
				<verse number="19">ಹನ್ನೆರಡನೆಯವನು ಹಷಬ್ಯ</verse>
				<verse number="20">ಹದಿಮೂರನೆಯವನು ಶೂಬಾಯೇಲ್</verse>
				<verse number="21">ಹದಿನಾಲ್ಕನೆಯವನು ಮತ್ತಿತ್ಯ</verse>
				<verse number="22">ಹದಿನೈದನೆಯವನು ಯೆರೆಮೋತ್</verse>
				<verse number="23">ಹದಿನಾರನೆಯವನು ಹನನ್ಯ</verse>
				<verse number="24">ಹದಿನೇಳನೆಯವನು ಯೊಷ್ಬೆಕಾಷ</verse>
				<verse number="25">ಹದಿನೆಂಟನೆಯವನು ಹನಾನೀ</verse>
				<verse number="26">ಹತ್ತೊಂಬತ್ತನೆಯವನು ಮಲ್ಲೋತಿ</verse>
				<verse number="27">ಇಪ್ಪತ್ತನೆಯವನು ಎಲೀಯಾತ</verse>
				<verse number="28">ಇಪ್ಪತ್ತೊಂದನೆಯವನು ಹೋತೀರ್</verse>
				<verse number="29">ಇಪ್ಪತ್ತೆರಡನೆಯವನು ಗಿದ್ದಲ್ತಿ</verse>
				<verse number="30">ಇಪ್ಪತ್ತಮೂರನೆಯವನು ಮಹಜೀಯೋತ್</verse>
				<verse number="31">ಇಪ್ಪತ್ತನಾಲ್ಕನೆಯವನು ರೋಮಮ್ತಿಯೆಜೆರ್.</verse>
			</chapter>
			<chapter number="26">
				<verse number="1">ದೇವಾಲಯದ ಕಾವಲುಗಾರರಾಗಿ ಸೇವೆಮಾಡಲು ನೇಮಕಗೊಂಡ ಲೇವಿಯರ ಹೆಸರುಗಳು: ಕೋರಹೀಯನಾದ ಮೆಷೆಲೆಮ್ಯ; ಇವನು ಕೊರೇಯನ ಮಗ ಹಾಗೂ ಆಸಾಫನ ಮೊಮ್ಮಗ;</verse>
				<verse number="2">ಮೆಷಲೆಮ್ಯನ ಮಕ್ಕಳಲ್ಲಿ ಜೆಕರ್ಯನು ಚೊಚ್ಚಲನು; ಎದೀಯಯೇಲನು ಮರಚಲನು; ಜೆಬದ್ಯನು ಮೂರನೆಯವನು; ಯೆತ್ನಿಯೇಲನು ನಾಲ್ಕನೆಯವನು.</verse>
				<verse number="3">ಏಲಾಮನು ಐದನೆಯವನು. ಯೆಹೋಹಾನಾನನು ಆರನೆಯವನು; ಎಲ್ಯೆಹೋಯೇನೈ ಏಳನೆಯವನು.</verse>
				<verse number="4">ಓಬೇದೆದೋಮನ ಮಕ್ಕಳಲ್ಲಿ ಶೆಮಾಯನು ಚೊಚ್ಚಲನು; ಯೆಹೋಜಾಬಾದನು ಮರಚಲನು; ಯೋವಾಹನು ಮೂರನೆಯವನು; ಸಾಕಾರನು ನಾಲ್ಕನೆಯವನು; ನೆತನೇಲನು ಐದನೆಯವನು;</verse>
				<verse number="5">ಅಮ್ಮೀಯೇಲನು ಆರನೆಯವನು; ಇಸ್ಸಾಕಾರನು ಏಳನೆಯವನು; ಪೆಯುಲ್ಲಿತೈಯು ಎಂಟನೆಯವನು. ಓಬೇದೆದೋಮನು ದೇವರ ಆಶೀರ್ವಾದಕ್ಕೆ ಪಾತ್ರನಾಗಿದ್ದನು.</verse>
				<verse number="6">ಅವನ ಮಗ ಶೆಮಾಯನ ಮಕ್ಕಳು ಗೋತ್ರಪ್ರಧಾನರೂ ಮಹಾಸಮರ್ಥರೂ ಆಗಿದ್ದರು.</verse>
				<verse number="7">ಇವರು ಯಾರೆಂದರೆ, ಒತ್ನೀ, ರೆಫಾಯೇಲ್, ಓಬೇದ್, ಎಲ್ಜಾಬಾದ್ ಇವರು ಹಾಗೂ ಬಹು ಸಮರ್ಥರಾದ, ಎಲೀಹು, ಸೆಮಕ್ಯ ಎಂಬ ಇವರ ಸಹೋದರರು.</verse>
				<verse number="8">ಇವರೆಲ್ಲರೂ ಓಬೇದೆದೋಮನ ಸಂತಾನದವರು. ಸಮರ್ಥರೂ ಸೇವೆಯಲ್ಲಿ ಗಟ್ಟಿಗರೂ ಆಗಿದ್ದ ಇವರೂ ಇವರ ಮಕ್ಕಳೂ ಸಹೋದರರೂ ಕೂಡಿ ಅರವತ್ತೆರಡು ಮಂದಿ ಇದ್ದರು.</verse>
				<verse number="9">ಮೆಷೆಲಿಮ್ಯನ ಮಕ್ಕಳೂ ಸಹೋದರರೂ ಹದಿನೆಂಟು ಮಂದಿ; ಇವರೂ ಸಮರ್ಥರಾಗಿದ್ದರು.</verse>
				<verse number="10">ಮೆರಾರೀಯನಾದ ಹೋಸನಿಗೂ ಮಕ್ಕಳಿದ್ದರು; ಅವರಲ್ಲಿ ಶಿಮ್ರಿ ಎಂಬವನು ಮುಖ್ಯಸ್ಥನಾಗಿದ್ದನು. ಇವನು ಚೊಚ್ಚಲನಲ್ಲದಿದ್ದರೂ ತಂದೆ ಅವನನ್ನೇ ಮುಖ್ಯಸ್ಥನನ್ನಾಗಿ ನೇಮಿಸಿದನು.</verse>
				<verse number="11">ಹಿಲ್ಕೀಯನು ಎರಡನೆಯವನು; ಟೋಬಲ್ಯನು ಮೂರನೆಯವನು; ಜೆಕರ್ಯನು ನಾಲ್ಕನೆಯವನು. ಹೋಸನ ಮಕ್ಕಳೂ ಸಹೋದರರೂ ಒಟ್ಟಿಗೆ ಹದಿಮೂರು ಮಂದಿ.</verse>
				<verse number="12">ಈ ದ್ವಾರಪಾಲಕ ವರ್ಗಗಳ ಪ್ರಧಾನ ಪುರುಷರು ತಮ್ಮ ಕುಲಬಂಧುಗಳಂತೆ ಸರ್ವೇಶ್ವರನ ಆಲಯದಲ್ಲಿ ಸೇವೆಮಾಡುತ್ತಿದ್ದರು.</verse>
				<verse number="13">ಅವರು, ಕನಿಷ್ಠ ಕುಟುಂಬವೆಂದಾಗಲಿ ಶ್ರೇಷ್ಠ ಕುಟುಂಬವೆಂದಾಗಲಿ ವ್ಯತ್ಯಾಸಮಾಡದೆ, ತಮ್ಮಲ್ಲಿ ಪ್ರತಿಯೊಬ್ಬನು ಕಾಯತಕ್ಕ ಹೆಬ್ಬಾಗಿಲುಗಳನ್ನು ಚೀಟಿನಿಂದಲೇ ಗೊತ್ತುಮಾಡಿಕೊಳ್ಳುತ್ತಿದ್ದರು.</verse>
				<verse number="14">ಪೂರ್ವದಿಕ್ಕಿನ ಚೀಟು ಶೆಲೆಮ್ಯನ ಹೆಸರಿಗೆ ಬಿದ್ದಿತ್ತು. ಬಹು ವಿವೇಕವುಳ್ಳ ಪಂಚಾಯತಗಾರನಾಗಿರುವ ಅವನ ಮಗ ಜೆಕರ್ಯನ ಹೆಸರಿಗೆ ಉತ್ತರ ದಿಕ್ಕಿನ ಚೀಟು ಬಿದ್ದಿತ್ತು.</verse>
				<verse number="15">ಓಬೇದೆದೋಮನಿಗೆ ದಕ್ಷಿಣ ಬಾಗಿಲೂ ಅವನ ಮಕ್ಕಳಿಗೆ ಉಗ್ರಾಣ ಮಂದಿರವೂ</verse>
				<verse number="16">ಶುಪ್ಪೀಮ್, ಹೋಸ ಎಂಬವರಿಗೆ ಪಶ್ಚಿಮ ಬಾಗಿಲೂ ಅದರ ಸಮೀಪದಲ್ಲಿರುವ ಶೆಲ್ಲೆಕೆತೆಂಬ ಬಾಗಿಲೂ ಚೀಟಿನಿಂದ ನೇಮಕವಾಗಿದ್ದವು. ಶೆಲ್ಲೆಕೆತ್ ಬಾಗಿಲು ಪಟ್ಟಣದಿಂದ ದೇವಾಲಯಕ್ಕೆ ಏರಿಹೋಗುವ ದಾರಿಯಲ್ಲಿದೆ.</verse>
				<verse number="17">ಲೇವಿಯರಲ್ಲಿ ಪ್ರತಿದಿನವೂ ಪೂರ್ವ ಬಾಗಿಲನ್ನು ಆರು ಮಂದಿ, ಪಶ್ಚಿಮ ಬಾಗಿಲನ್ನು ನಾಲ್ಕು ಮಂದಿ, ದಕ್ಷಿಣ ಬಾಗಿಲನ್ನು ನಾಲ್ಕು ಮಂದಿ, ಉಗ್ರಾಣ ಮಂದಿರದ ಎರಡು ಬಾಗಿಲುಗಳನ್ನು ಇಬ್ಬಿಬ್ಬರು,</verse>
				<verse number="18">ಪರ್ಬರೆಂಬ ಕಟ್ಟಡವಿರುವ ಪಶ್ಚಿಮ ದಿಕ್ಕಿನ ದಾರಿಯ ಬಾಗಿಲನ್ನು ನಾಲ್ಕು ಮಂದಿ, ಪರ್ಬರನ್ನು ಇಬ್ಬರು ಕಾಯುತ್ತಿದ್ದರು.</verse>
				<verse number="19">ಕೋರಹೀಯರ ಮತ್ತು ಮೆರಾರೀಯರ ದ್ವಾರಪಾಲಕ ವರ್ಗಗಳು ಇವೇ.</verse>
				<verse number="20">ಮೇಲೆ ಕಂಡವರ ಕುಲಬಂಧುಗಳೂ ಹಾಗೂ ದೇವಾಲಯದ ಭಂಡಾರ, ಪರಿಶುದ್ಧ ವಸ್ತುಗಳ ಭಂಡಾರ ಇವುಗಳನ್ನು ಕಾಯುವ ಲೇವಿಯರ ಪಟ್ಟಿ:</verse>
				<verse number="21">ಗೇರ್ಷೋಮನಿಗೆ ಹುಟ್ಟಿದ ಲದ್ದಾನ ಸಂತಾನದವರಾದ ಲದ್ದಾನ್ಯ ಕುಟುಂಬಗಳ ಮುಖ್ಯಸ್ಥರಲ್ಲಿ ಯೆಹೀಯೇಲೀ;</verse>
				<verse number="22">ಮತ್ತು ಯೆಹೀಯೇಲ್ಯರಾದ ಜೇತಾಮನು ಹಾಗೂ ಯೋವೇಲನೆಂಬ ಅವನ ತಮ್ಮನು ಸರ್ವೇಶ್ವರನ ಆಲಯದ ಭಂಡಾರಗಳನ್ನು ಕಾಯುತ್ತಿದ್ದರು.</verse>
				<verse number="23">ಅಮ್ರಾಮ್, ಇಚ್ಚಾರ್, ಹೆಬ್ರೋನ್, ಉಜ್ಜೀಯೇಲ್</verse>
				<verse number="24">ಇವರ ಸಂತಾನದವರಲ್ಲಿ ಗೇರ್ಷೋಮನ ಮಗನೂ ಮೋಶೆಯ ಮೊಮ್ಮಗನೂ ಆಗಿರುವ ಶೆಬೂವೇಲನು ಭಂಡಾರಗಳನ್ನು ಕಾಯುವವರ ಮುಖ್ಯಸ್ಥನು.</verse>
				<verse number="25">ಎಲೀಯೆಜೆರನ ಮಗ ರೆಹಬ್ಯನಿಗೆ ಹುಟ್ಟಿದ ಯೆಶಾಯನ ಮರಿಮಗನೂ ಯೋರಾಮನ ಮೊಮ್ಮಗನೂ</verse>
				<verse number="26">ಜಿಕ್ರೀಯ ಮಗನೂ ಆಗಿರುವ ಶೆಕೋಮೋತನೂ ಅವನ ಸಹೋದರರೂ ಪ್ರತಿಷ್ಠಿತ ವಸ್ತುಗಳ ಭಂಡಾರವನ್ನು ಕಾಯುವವರು; ಇವರು ಶೆಬೂವೇಲನ ಗೋತ್ರ ಬಂಧುಗಳು.</verse>
				<verse number="27">ಅರಸನಾದ ದಾವೀದನೂ ಗೋತ್ರ ಪ್ರಧಾನರೂ ಸಹಸ್ರ ಅಧಿಪತಿಗಳೂ ಶತಾಧಿಪತಿಗಳ ಸೇನಾನಾಯಕರೂ ಸರ್ವೇಶ್ವರನ ಆಲಯದ ವೃದ್ಧಿಗಾಗಿ ತಮಗೆ ಯುದ್ಧದಲ್ಲಿ ಸಿಕ್ಕಿದ ಕೊಳ್ಳೆಯ ಒಂದು ಭಾಗವನ್ನು ಸರ್ವೇಶ್ವರನಿಗೆಂದು ಮುಡಿಪಾಗಿಟ್ಟರು.</verse>
				<verse number="28">ಇವರಲ್ಲದೆ ದರ್ಶಿಯಾದ ಸಮುವೇಲನೂ ಕೀಷನ ಮಗ ಸೌಲನೂ ನೇರನ ಮಗ ಅಬ್ನೇರನೂ ಜೆರೂಯಳ ಮಗ ಯೋವಾಬನೂ ಹಾಗೆಯೇ ಮಾಡಿದ್ದರು. ಈ ಪ್ರಕಾರ ಪ್ರತಿಷ್ಠಿತವಾದದ್ದೆಲ್ಲವೂ ಶೆಲೋಮೋತನ ಮತ್ತು ಅವನ ಸಹೋದರರ ವಶದಲ್ಲಿತ್ತು.</verse>
				<verse number="29">ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಮಕ್ಕಳೂ ಲೌಕಿಕೋದ್ಯೋಗದಲ್ಲಿದ್ದರು. ಅವರು ಇಸ್ರಯೇಲರ ಅಧಿಕಾರಿಗಳೂ ನ್ಯಾಯಾಧಿಪತಿಗಳೂ ಆಗಿದ್ದರು.</verse>
				<verse number="30">ಹೆಬ್ರೋನ್ಯರಲ್ಲಿ ಹಷಬ್ಯನೂ ಅವನ ಸಹೋದರರೂ ಜೋರ್ಡನ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿದ್ದ ಇಸ್ರಯೇಲರೊಳಗೆ ಸರ್ವೇಶ್ವರನ ಸೇವಾಕಾರ್ಯಗಳನ್ನೂ ರಾಜಕೀಯ ಕಾರ್ಯಗಳನ್ನೂ ನಡೆಸುತ್ತಿದ್ದರು. ಸಮರ್ಥರಾದ ಅವರು ಸಾವಿರದ ಏಳುನೂರು ಮಂದಿ ಇದ್ದರು.</verse>
				<verse number="31">ದಾವೀದನ ಆಳ್ವಿಕೆಯ ನಲವತ್ತನೆಯ ವರ್ಷದಲ್ಲಿ ಹೆಬ್ರೋನ್ಯರಿಗೆ ಸೇರಿದವರು ಯಾರಾರೆಂದು ವಿಚಾರಣೆ ನಡೆದಾಗ ಗಿಲ್ಯಾದಿನ ಯಾಜೇರಿನ ಶ್ರೀಮಂತರಲ್ಲಿ ಅನೇಕರು ಅವರ ಗೋತ್ರದವರು ಯಾರೆಂದು ಗೊತ್ತಾಯಿತು. ಈ ಹೆಬ್ರೋನ್ಯರಲ್ಲಿ ಯೇರೀಯನು ಮುಖ್ಯಸ್ಥನು;</verse>
				<verse number="32">ಶ್ರೀಮಂತರೂ ಕುಟುಂಬಪ್ರಧಾನರೂ ಆದ ಅವನ ಗೋತ್ರಬಂಧುಗಳು ಎರಡು ಸಾವಿರದ ಏಳುನೂರು ಮಂದಿ ಇದ್ದರು. ಅರಸ ದಾವೀದನು ರೂಬೇನ್, ಗಾದ್, ಅರ್ಧಮನಸ್ಸೆ ಕುಲಗಳವರ ಮೇಲೆ ಇವರನ್ನೇ ದೈವಿಕ ಕಾರ್ಯಗಳಲ್ಲೂ ರಾಜಕೀಯ ಕಾರ್ಯಗಳಲ್ಲೂ ಅಧಿಕಾರಿಗಳನ್ನಾಗಿ ನೇಮಿಸಿದನು.</verse>
			</chapter>
			<chapter number="27">
				<verse number="1">ಇಸ್ರಯೇಲರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ವಿವಿಧ ಸೇವೆಯನ್ನು ಮಾಡಬೇಕಾಗಿದ್ದ ವರ್ಗಗಳ ಅಧಿಪತಿಗಳು ಹಾಗು ಇವರ ಕಾರ್ಯಕ್ರಮಗಳ ಪಟ್ಟಿ: ವರ್ಷದ ಎಲ್ಲಾ ತಿಂಗಳುಗಳಲ್ಲಿ, ತಿಂಗಳಿಗೆ ಒಂದು ವರ್ಗದಂತೆ, ಸರದಿಯ ಮೇಲೆ ಕೆಲಸಕ್ಕಾಗಿ ಬರುತ್ತಿದ್ದ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಇದ್ದರು.</verse>
				<verse number="2">ಪೆರೆಚನ ಸಂತಾನದವನೂ ಜಬ್ದೀಯೇಲನ ಮಗನೂ ಆದ ಯಾಷೊಬ್ಬಾಮನು ಮೊದಲನೆಯ ವರ್ಗದ ನಾಯಕ.</verse>
				<verse number="3">ಇವನು ಮೊದಲನೆಯ ತಿಂಗಳಿನ ಸೇನಾಪತಿಗಳ ಮುಖ್ಯಸ್ಥ. ಮೊದಲನೆಯ ತಿಂಗಳಿನಲ್ಲಿ ಸೇವೆ ಸಲ್ಲಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.</verse>
				<verse number="4">ಅಹೋಹಿಯನಾದ ದೋದೈಯು ಎರಡನೆಯ ತಿಂಗಳಿನ ವರ್ಗದ ನಾಯಕ; ಆ ವರ್ಗದಲ್ಲಿ ಮಿಕ್ಲೋತನೆಂಬವನೂ ನಾಯಕನು. ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.</verse>
				<verse number="5">ಯಾಜಕನಾದ ಯೆಹೋಯಾದನ ಮಗನೂ ಪ್ರಧಾನನೂ ಆದ ಬೆನಾಯನು ಮೂರನೆಯ ವರ್ಗದ ನಾಯಕ. ಮೂರನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.</verse>
				<verse number="6">ಈ ಬೆನಾಯನು ಮೂವತ್ತು ಮಂದಿಯಲ್ಲಿ ಪ್ರಸಿದ್ಧ ರಣವೀರನೂ ಅವರ ಮುಖ್ಯಸ್ಥನೂ ಆಗಿದ್ದನು. ಅವನ ವರ್ಗದಲ್ಲಿ ಅವನ ಮಗನಾದ ಅಮ್ಮೀಜಾಬಾದನೂ ಇದ್ದನು.</verse>
				<verse number="7">ಯೋವಾಬನ ತಮ್ಮನಾದ ಅಸಾಹೇಲನೂ ಅವನು ಸತ್ತನಂತರ ಅವನ ಮಗ ಜೆಬದ್ಯನೂ ನಾಲ್ಕನೆಯ ವರ್ಗದ ನಾಯಕರು; ನಾಲ್ಕನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವರ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.</verse>
				<verse number="8">ಇಜ್ರಾಹ್ಯನಾದ ಶಮ್ಹೂತನು ಐದನೆಯ ವರ್ಗದ ನಾಯಕ. ಐದನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.</verse>
				<verse number="9">ತೆಕೋವಿನ ಇಕ್ಕೇಷನ ಮಗ ಈರ ಎಂಬವನು ಆರನೆಯ ವರ್ಗದ ನಾಯಕ. ಆರನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.</verse>
				<verse number="10">ಎಫ್ರಯಿಮ್ ಕುಲದ ಪೆಲೋನ್ಯನಾದ ಹೆಲೆಚನು ಏಳನೆಯ ವರ್ಗದ ನಾಯಕ; ಏಳನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ಮಾರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.</verse>
				<verse number="11">ಹುಷ ಊರಿನ ಜೆರಹೀಯನಾದ ಸಿಬ್ಬೆಕೈಯು ಎಂಟನೆಯ ವರ್ಗದ ನಾಯಕ. ಎಂಟನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.</verse>
				<verse number="12">ಬೆನ್ಯಾಮೀನ್ ಕುಲದ ಅನತೋತ್ ಊರಿನವನಾದ ಅಬ್ಬೀಯೆಜೆರನು ಒಂಬತ್ತನೆಯ ವರ್ಗದ ನಾಯಕ. ಒಂಬತ್ತನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.</verse>
				<verse number="13">ನೆಟೋಫ ಊರಿನ ಜಿರಹೀಯನಾದ ಮಹರೈಯು ಹತ್ತನೆಯ ವರ್ಗದ ನಾಯಕ; ಹತ್ತನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.</verse>
				<verse number="14">ಎಫ್ರಯಿಮ್ ಕುಲದ ಪಿರ್ರಾತೋನ್ಯನಾದ ಬೆನಾಯನು ಹನ್ನೊಂದನೆಯ ವರ್ಗದ ನಾಯಕ. ಹನ್ನೊಂದನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.</verse>
				<verse number="15">ನೆಟೋಫ ಊರಿನವನೂ ಒತ್ನೀಯೇಲನ ಸಂತಾನದವನೂ ಆದ ಹೆಲ್ದೈಯು ಹನ್ನೆರಡನೆಯ ವರ್ಗದ ನಾಯಕ; ಹನ್ನೆರಡನೆಯ ತಿಂಗಳಿನಲ್ಲಿ ಸೇವಿಸತಕ್ಕ ಅವನ ವರ್ಗದವರ ಸಂಖ್ಯೆ ಇಪ್ಪತ್ತನಾಲ್ಕು ಸಾವಿರ.</verse>
				<verse number="16">ಇಸ್ರಯೇಲ್ ಕುಲಗಳ ಅಧ್ಯಕ್ಷರುಗಳು: [ಕುಲ] — [ಅಧ್ಯಕ್ಷರು] ರೂಬೇನ್ — ಜಿಕ್ರಿಯ ಮಗ ಎಲೀಯೆಜೆರ್ ಸಿಮೆಯೋನ್ — ಮಾಕನ ಮಗ ಶೆಫಟ್ಯ 17 ಲೇವಿ — ಕೆಮುವೇಲನ ಮಗ ಹಷಬ್ಯ 18 ಆರೋನ — ಚಾದೋಕ್ ಯೂದ — ಎಲೀಹು, ಅರಸ ದಾವೀದನ ಸಹೋದರರಲ್ಲಿ ಒಬ್ಬ ಇಸ್ಸಾಕಾರ್ — ಮೀಕಾಯೇಲನ ಮಗ ಒಮ್ರಿ 19 ಜೆಬುಲೂನ — ಓಬದ್ಯನ ಮಗ ಇಷ್ಮಾಯ ನಫ್ತಾಲಿ — ಅಜ್ರೀಯೇಲನ ಮಗ ಯೆರೀಮೋತ್ 20 ಎಫ್ರಯಿಮ — ಅಜಜ್ಯನ ಮಗ ಹೊಷೇಯ ಪಶ್ಚಿಮ ಮನಸ್ಸೆ — ಪೆದಾಯನ ಮಗ ಯೋವೇಲ್ 2೧ ಪೂರ್ವ. ಮನಸ್ಸೆ — ಜೆಕರ್ಯನ ಮಗ ಇದ್ದೋ ಬೆನ್ಯಾಮೀನ — ಅಬ್ನೇರನ ಮಗ ಯಗಸೀಯೇಲ್ 22 ದಾನ — ಯೆರೋಹಾಮನ ಮಗ ಅಜರೇಲ್</verse>
				<verse number="17"></verse>
				<verse number="18"></verse>
				<verse number="19"></verse>
				<verse number="20"></verse>
				<verse number="21"></verse>
				<verse number="22"></verse>
				<verse number="23">ಇಸ್ರಯೇಲರನ್ನು ಆಕಾಶದ ನಕ್ಷತ್ರಗಳಂತೆ ಅಸಂಖ್ಯವಾಗಿ ಮಾಡುವೆನೆಂದು ಸರ್ವೇಶ್ವರ ಕೊಟ್ಟ ಮಾತನ್ನು ದಾವೀದನು ನಂಬಿ ಇಪ್ಪತ್ತು ವರ್ಷಕ್ಕಿಂತ ಕಡಿಮೆಯಾದ ವಯಸ್ಸುಳ್ಳವರನ್ನು ಲೆಕ್ಕಿಸಲಿಲ್ಲ.</verse>
				<verse number="24">ಚೆರೂಯಳ ಮಗ ಯೋವಾಬನು ಅವರನ್ನು ಲೆಕ್ಕಿಸಲಾರಂಭಿಸಿದರೂ, ಇದರ ನಿಮಿತ್ತ ಇಸ್ರಯೇಲರ ಮೇಲೆ ದೇವರ ಕೋಪವುಂಟಾಗಿ, ಅದನ್ನು ಪೂರ್ತಿಗೊಳಿಸಲಿಲ್ಲ. ಈ ಜನಗಣತಿ ದಾವೀದನ ರಾಜ್ಯದ ಇತಿಹಾಸದಲ್ಲಿ ಲಿಖಿತವಾಗಲಿಲ್ಲ.</verse>
				<verse number="25">ಅರಸ ದಾವೀದನ ಸೊತ್ತಿನ ಮೇಲ್ವಿಚಾರಕರಾಗಿ ನೇಮಕಗೊಂಡವರು ಯಾರೆಂದರೆ: ಅರಸನ ಭಂಡಾರಗಳ ಮೇಲೆ ಅದೀಯೇಲನ ಮಗ ಅಜ್ಮಾವೆತ್; ಹೊಲದಲ್ಲು, ಪಟ್ಟಣಗಳಲ್ಲು, ಹಳ್ಳಿಗಳಲ್ಲು ಹಾಗೂ ಬರುಜುಗಳ ಮೇಲೂ ಇದ್ದ ಉಗ್ರಾಣಗಳ ಮೇಲೆ ಉಜ್ಜೀಯನ ಮಗ ಯೋನಾತಾನ್;</verse>
				<verse number="26">ಹೊಲಗಳನ್ನು ವ್ಯವಸಾಯ ಮಾಡುವ ಆಳುಗಳ ಮೇಲೆ ಕೆಲೂಬನ ಮಗನಾದ ಎಜ್ರೀ;</verse>
				<verse number="27">ದ್ರಾಕ್ಷೀತೋಟಗಳ ಮೇಲೆ ರಾಮಾ ಊರಿನ ಶಿಮ್ಮೀ; ದ್ರಾಕ್ಷೀತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಷ್ಮೀಯನಾದ ಜಬ್ದೀ;</verse>
				<verse number="28">ಎಣ್ಣೇಮರದ ತೋಪುಗಳ ಮೇಲೆ ಹಾಗೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆ ಗೆದೆರೂರಿನವನಾದ ಬಾಳ್ಷಾನಾನ್; ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷ್;</verse>
				<verse number="29">ಶಾರೋನಿನಲ್ಲಿ ಮೇಯುವ ದನಗಳ ಮೇಲೆ‍ ಶಾರೋನ್ಯನಾದ ಶಿಟ್ರೈ; ಕಣಿವೆಗಳಲ್ಲಿ ಮೇಯುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟ್;</verse>
				<verse number="30">ಒಂಟೆಗಳ ಮೇಲೆ ಇಷ್ಮಾಯೇಲ್ಯನಾದ ಓಬೀಲ್; ಹೆಣ್ಣುಕತ್ತೆಗಳ ಮೇಲೆ ಮೇರೊನೋತ್ಯನಾದ ಯೆಹ್ದೆಯ;</verse>
				<verse number="31">ಆಡುಕುರಿಗಳ ಮೇಲೆ ಹಗ್ರೀಯನಾದ ಯಾಜೀಜ್.</verse>
				<verse number="32">ವಿವೇಕಿಯೂ ಶಾಸ್ತ್ರಜ್ಞನೂ ಆದ ಯೋನಾತಾನನೆಂಬ ದಾವೀದನ ಚಿಕ್ಕಪ್ಪನು ಮಂತ್ರಿಯಾಗಿದ್ದನು; ಹಕ್ಮೋನಿಯ ಮಗ ಯೆಹೀಯೇಲನು ರಾಜಪುತ್ರ ಪಾಲಕನಾಗಿದ್ದನು.</verse>
				<verse number="33">ಅಹೀತೋಫೆಲನು ಅರಸನ ಮಂತ್ರಿ; ಅಕೀರ್ಯನಾದ ಹೂಷೈಯು ಅವನ ಮಿತ್ರ;</verse>
				<verse number="34">ಬೆನಾಯನ ಮಗ ಯೆಹೋಯಾದಾವನೂ ಎಬ್ಯಾತಾರನೂ ಅಹೀತೋಫೆಲನ ಉತ್ತರಾಧಿಕಾರಿಗಳು; ಯೋವಾಬನು ಅರಸನ ಸೈನ್ಯಾಧಿಪತಿ.</verse>
			</chapter>
			<chapter number="28">
				<verse number="1">ದಾವೀದನು ಇಸ್ರಯೇಲರ ಎಲ್ಲ ಪದಾಧಿಕಾರಿಗಳನ್ನು ಅಂದರೆ, ಕುಲ ಅಧ್ಯಕ್ಷರುಗಳು, ಅರಸನ ಸೇವೆಮಾಡುತ್ತಿದ್ದ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ದನಕುರಿ ಮೊದಲಾದ ಸೊತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ರಣವೀರರು ಹೀಗೆ ಎಲ್ಲ ಅಧಿಕಾರಿಗಳನ್ನು ಜೆರುಸಲೇಮಿಗೆ ಕರೆಸಿದನು.</verse>
				<verse number="2">ಅವರು ಕೂಡಿಬಂದಾಗ ಅರಸ ದಾವೀದನು ಎದ್ದು ನಿಂತು ಅವರಿಗೆ, “ನನ್ನ ಸಹೋದರರೇ, ಪ್ರಜೆಗಳೇ, ಕೇಳಿ; ಸರ್ವೇಶ್ವರನ ನಿಬಂಧನ ಮಂಜೂಷಕ್ಕಾಗಿ ಹಾಗೂ ನಮ್ಮ ದೇವರ ಪಾದಪೀಠಕ್ಕಾಗಿ ಆಲಯವನ್ನು ಕಟ್ಟಿಸಬೇಕೆಂದು ಮನಸ್ಸುಮಾಡಿ ಎಲ್ಲವನ್ನೂ ಸಿದ್ಧಪಡಿಸಿದೆ.</verse>
				<verse number="3">ಆಗ ದೇವರು ನನಗೆ, ‘ನೀನು ಮಹಾಯುದ್ಧಗಳನ್ನು ನಡೆಸಿ, ಬಹಳ ರಕ್ತವನ್ನು ಸುರಿಸಿದವನು; ನನ್ನ ಹೆಸರಿಗೆ ನೀನು ಆಲಯವನ್ನು ಕಟ್ಟಿಸಬಾರದು,’ ಎಂದು ಹೇಳಿದರು.</verse>
				<verse number="4">“ಇಸ್ರಯೇಲ್ ದೇವರಾದ ಸರ್ವೇಶ್ವರ ನನ್ನ ತಂದೆಯ ಮನೆಯವರೆಲ್ಲರಲ್ಲಿ ನನ್ನನ್ನೇ ಸದಾ ಇಸ್ರಯೇಲರ ಅರಸನಾಗಿರುವುದಕ್ಕೆ ಆರಿಸಿಕೊಂಡರು; ಯೆಹೂದಕುಲ ರಾಜಕುಲವಾಗಬೇಕೆಂದು ನೇಮಿಸಿ ಆ ಕುಲದಲ್ಲಿ ನನ್ನ ತಂದೆಯ ಕುಟುಂಬವನ್ನು ಆರಿಸಿಕೊಂಡರು. ನನ್ನ ತಂದೆಯ ಎಲ್ಲ ಮಕ್ಕಳಲ್ಲಿ ನನ್ನನ್ನೇ ಮೆಚ್ಚಿ, ಇಸ್ರಯೇಲರೆಲ್ಲರ ಅರಸನನ್ನಾಗಿ ಮಾಡಿದರು.</verse>
				<verse number="5">ನನಗೆ ದಯಪಾಲಿಸಿದ ಅನೇಕ ಮಕ್ಕಳಲ್ಲಿ ನನ್ನ ಮಗ ಸೊಲೊಮೋನನನ್ನು ಸರ್ವೇಶ್ವರನ ರಾಜ್ಯಸಿಂಹಾಸನವಾಗಿರುವ ಇಸ್ರಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸುವುದಕ್ಕೆ ಆರಿಸಿಕೊಂಡರು.</verse>
				<verse number="6">‘ನಿನ್ನ ಮಗ ಸೊಲೊಮೋನನೇ ನನ್ನ ಆಲಯವನ್ನೂ ಅದರ ಪ್ರಾಕಾರಗಳನ್ನೂ ಕಟ್ಟಿಸುವನು. ಅವನು ನನಗೆ ಮಗನಾಗಿ ಇರಬೇಕೆಂದು ಅವನನ್ನು ಆರಿಸಿಕೊಂಡಿದ್ದೇನೆ; ನಾನು ಅವನಿಗೆ ತಂದೆಯಾಗಿ ಇರುವೆನು.</verse>
				<verse number="7">ಅವನು ಈಗಿನಂತೆ ಯಾವಾಗಲೂ ನನ್ನ ಆಜ್ಞಾವಿಧಿಗಳನ್ನು ಕೈಗೊಂಡು ನಡೆಯುವುದಾದರೆ ಅವನ ರಾಜ್ಯವನ್ನು ಸದಾಕಾಲವೂ ಸ್ಥಿರಪಡಿಸುವೆನು’ ಎಂದು ಅವರು ನನಗೆ ಹೇಳಿದ್ದಾರೆ.</verse>
				<verse number="8">“ನಿಮ್ಮ ದೇವರಾದ ಸರ್ವೇಶ್ವರನ ಎಲ್ಲಾ ಆಜ್ಞೆಗಳನ್ನು ಧ್ಯಾನಿಸಿ ಕೈಗೊಳ್ಳಬೇಕೆಂದು ಸರ್ವೇಶ್ವರನ ಸಮಾಜವಾದ ಸಮಸ್ತ ಇಸ್ರಯೇಲರ ಮುಂದೆ, ನಮ್ಮ ದೇವರಿಗೆ ಕೇಳಿಸುವಂತೆ, ನಿಮ್ಮನ್ನು ಎಚ್ಚರಿಸುತ್ತೇನೆ. ಹಾಗೆ ಮಾಡಿದರೆ ಈ ಒಳ್ಳೆಯ ನಾಡು ಸದಾಕಾಲ ನಿಮ್ಮ ಮತ್ತು ನಿಮ್ಮ ಸಂತಾನದವರ ಸೊತ್ತಾಗಿರುವುದು.</verse>
				<verse number="9">“ನನ್ನ ಮಗ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಪೂರ್ಣಹೃದಯದಿಂದ ಹಾಗೂ ಮನಸ್ಸಂತೋಷದಿಂದ ಅವರೊಬ್ಬರಿಗೇ ಸೇವೆ ಸಲ್ಲಿಸು. ಸರ್ವೇಶ್ವರನು ಎಲ್ಲಾ ಹೃದಯಗಳನ್ನು ಶೋಧಿಸುವವರೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವರೂ ಆಗಿದ್ದಾರೆ. ನೀನು ಅವರನ್ನು ಆರಿಸಿದರೆ ಅವರು ನಿನಗೆ ಸಿಗುವರು; ಅವರನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವರು.</verse>
				<verse number="10">ಆದುದರಿಂದ ಎಚ್ಚರಿಕೆ! ಸರ್ವೇಶ್ವರ ತನಗೋಸ್ಕರ ಪವಿತ್ರಾಲಯವನ್ನು ಕಟ್ಟಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ; ಧೈರ್ಯದಿಂದ ಕೆಲಸಕ್ಕೆ ಕೈಹಚ್ಚು,” ಎಂದನು.</verse>
				<verse number="11">ತರುವಾಯ ದಾವೀದನು ತನ್ನ ಮಗ ಸೊಲೊಮೋನನಿಗೆ ದೇವಾಲಯದ ಮಂಟಪ, ಉಗ್ರಾಣಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನಮಂದಿರ, ಇವುಗಳ ನಕ್ಷೆಯನ್ನು ಕೊಟ್ಟನು. ಸರ್ವೇಶ್ವರನ ಆಲಯದ ಅಂಗಳಗಳು,</verse>
				<verse number="12">ಸುತ್ತಣ ಕೋಣೆಗಳು, ದೇವಾಲಯದ ಭಂಡಾರಗಳು, ಪ್ರತಿಷ್ಠಿತ ವಸ್ತುಗಳ ಭಂಡಾರಗಳು ಇವುಗಳ ವಿಷಯವಾಗಿ ವಿವರಿಸಿದನು.</verse>
				<verse number="13">ಯಾಜಕರ ಮತ್ತು ಲೇವಿಯರ ವರ್ಗಗಳು, ಸರ್ವೇಶ್ವರನ ಆಲಯದಲ್ಲಿ ನಡೆಯ ತಕ್ಕ ಎಲ್ಲಾ ಆರಾಧನೆ,</verse>
				<verse number="14">ಆರಾಧನೆಯ ಎಲ್ಲಾ ಸಾಮಗ್ರಿಗಳು, ಇವುಗಳ ಬಗ್ಗೆ ತಾವು ನಿರ್ಣಯಿಸಿಕೊಂಡದ್ದೆಲ್ಲವನ್ನೂ ವಿವರವಾಗಿ ತಿಳಿಸಿದನು.</verse>
				<verse number="15">ಇದಲ್ಲದೆ, ಆರಾಧನೆಯ ಆಯಾ ಆಚಾರಗಳಲ್ಲಿ ಉಪಯೋಗಿಸಬೇಕಾದ ಎಲ್ಲ ಸಾಮಾನುಗಳ ಬೆಳ್ಳಿ, ಬಂಗಾರದ ತೂಕ ಅಂದರೆ, ಬಂಗಾರದ ಹಣತೆಗಳಿರುವ ಬಂಗಾರದ ಪ್ರತಿಯೊಂದು ದೀಪಸ್ತಂಭದ ತೂಕ, ಬೇರೆ ಬೇರೆ ಕೆಲಸಗಳಿಗೆ ಉಪಯೋಗವಾಗುವ ಪ್ರತಿಯೊಂದು ಬೆಳ್ಳಿಯ ದೀಪಸ್ತಂಭದ ಮತ್ತು ಅದರ ಹಣತೆಗಳ ತೂಕ,</verse>
				<verse number="16">ಮೀಸಲು ರೊಟ್ಟಿಗಳನ್ನಿಡುವ ಪ್ರತಿಯೊಂದು ಮೇಜಿಗೆ ಉಪಯೋಗಿಸಬೇಕಾದ ಬಂಗಾರದ ತೂಕ, ಬೆಳ್ಳಿಯ ಮೇಜುಗಳ ಬೆಳ್ಳಿಯ ತೂಕ,</verse>
				<verse number="17">ಚೊಕ್ಕ ಬಂಗಾರದ ಮುಳ್ಳು, ಬೋಗುಣಿ, ಹೂಜಿಗಳ ಮತ್ತು ಬೆಳ್ಳಿಬಂಗಾರದ ಆಯಾ ಪಾತ್ರೆಗಳ ತೂಕ,</verse>
				<verse number="18">ಧೂಪವೇದಿಗೆ ಉಪಯೋಗಿಸಬೇಕಾದ ಚೊಕ್ಕಬಂಗಾರದ ತೂಕ ಎಷ್ಟೆಷ್ಟು ಇರಬೇಕೆಂಬುದನ್ನು ವಿವರಿಸಿದನು. ಹರಡಿದ ರೆಕ್ಕೆಗಳಿಂದ ಸರ್ವೇಶ್ವರನ ನಿಬಂಧನ ಮಂಜೂಷವನ್ನು ಮರೆಮಾಡುವ ಬಂಗಾರದ ಕೆರೂಬಿವಾಹನದ ನಕ್ಷೆಯನ್ನು ಕೊಟ್ಟನು.</verse>
				<verse number="19">ಆ ನಕ್ಷೆಗಳಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ಕುರಿತ ಜ್ಞಾನ ತನಗೆ ಸರ್ವೇಶ್ವರನ ಲೇಖನದಿಂದಲೇ ಪ್ರಾಪ್ತವಾಯಿತೆಂದು ಹೇಳಿದನು.</verse>
				<verse number="20">ಆಮೇಲೆ ದಾವೀದನು ತನ್ನ ಮಗ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು; ಅಂಜಬೇಡ, ಕಳವಳಗೊಳ್ಳಬೇಡ. ನನ್ನ ದೇವರಾಗಿರುವ ಸರ್ವೇಶ್ವರಸ್ವಾಮಿ ನಿನ್ನೊಂದಿಗೆ ಇರುತ್ತಾರೆ; ಅವರು ತಮ್ಮ ಆಲಯದ ಎಲ್ಲಾ ಕೆಲಸ ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ.</verse>
				<verse number="21">ಇಗೋ, ಯಾಜಕರ ಮತ್ತು ಲೇವಿಯರ ವರ್ಗಗಳವರು ಅಗತ್ಯವಾದ ಎಲ್ಲ ದೇವಾಲಯ ಸಂಬಂಧ ಕೆಲಸವನ್ನು ಮಾಡುವುದಕ್ಕೆ ಸಿದ್ಧರಾಗಿದ್ದಾರೆ. ಯಾವ ಕೆಲಸವಿದ್ದರೂ ಎಲ್ಲವನ್ನೂ ಜಾಣತನದಿಂದ ಮಾಡುವುದಕ್ಕೆ ಸಿದ್ಧಮನಸ್ಸುಳ್ಳವರು ನಿನ್ನ ಹತ್ತಿರ ಇದ್ದಾರೆ. ಅಧಿಪತಿಗಳೂ ಎಲ್ಲಾ ಪ್ರಜೆಗಳೂ ನಿನ್ನ ಆಜ್ಞೆಗೆ ವಿಧೇಯರಾಗಿರುವರು,” ಎಂದು ಹೇಳಿದನು.</verse>
			</chapter>
			<chapter number="29">
				<verse number="1">ತರುವಾಯ ಅರಸ ದಾವೀದನು, “ದೇವರು ನನ್ನ ಮಗ ಸೊಲೊಮೋನನನ್ನೇ ಆರಿಸಿಕೊಂಡಿದ್ದಾರೆ. ಆದರೆ ಅವನು ಇನ್ನೂ ಚಿಕ್ಕವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟ ತಕ್ಕ ಮಂದಿರ ದೇವರಾದ ಸರ್ವೇಶ್ವರನಿಗಾಗಿ!</verse>
				<verse number="2">ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ, ಇವುಗಳನ್ನೂ ಗೋಮೇಧಕ ರತ್ನ ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪುಹರಳು, ವಿವಿಧ ವರ್ಣದ ಕಲ್ಲು, ತರತರದ ಮಣೆ, ಚಂದ್ರಕಾಂತ ಇವುಗಳನ್ನೂ ನನ್ನ ದೇವರ ಮಂದಿರಕ್ಕಾಗಿ ರಾಶಿರಾಶಿಯಾಗಿ ಸಂಗ್ರಹಿಸಿದ್ದೇನೆ.</verse>
				<verse number="3">ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ, ನನ್ನ ದೇವರಾಲಯದ ಮೇಲಣ ಅಭಿಮಾನದಿಂದ ಅದಕ್ಕಾಗಿ ನನ್ನ ಸ್ವಂತ ಸೊತ್ತಿನಿಂದ</verse>
				<verse number="4">ನೂರು ಮೆಟ್ರಿಕ್ ಟನ್ ಒಫೀರ್ ದೇಶದ ಬಂಗಾರವನ್ನೂ ಸುಮಾರು ಇನ್ನೂರ ನಲವತ್ತು ಮೆಟ್ರಿಕ್ ಟನ್ ಚೊಕ್ಕ ಬೆಳ್ಳಿಯನ್ನೂ ಕೊಡುತ್ತೇನೆ.</verse>
				<verse number="5">ಈ ಬೆಳ್ಳಿಬಂಗಾರಗಳಿಂದ ಆಲಯದ ಗೋಡೆಗಳನ್ನು ಹೊದಿಸಬೇಕು, ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿಬಂಗಾರದ ಸಾಮಾನುಗಳನ್ನು ಮಾಡಿಸಬೇಕು. ಈ ದಿನ ಉದಾರಹಸ್ತದಿಂದ ಸರ್ವೇಶ್ವರನಿಗಾಗಿ ಕಾಣಿಕೆಯನ್ನರ್ಪಿಸುವುದಕ್ಕೆ ಯಾರಿಗೆ ಮನಸ್ಸಿದೆ?” ಎಂದು ನೆರೆದ ಸಭೆಯನ್ನು ಕೇಳಿದನು.</verse>
				<verse number="6">ಇಸ್ರಯೇಲ್ ಗೋತ್ರ ಕುಟುಂಬಗಳ ಅಧ್ಯಕ್ಷರುಗಳು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಹಾಗೂ ಅರಸನ ಕೆಲಸದವರ ಮುಖ್ಯಸ್ಥರು ದೇವಾಲಯದ ಕೆಲಸಕ್ಕಾಗಿ ಸ್ವೇಚ್ಛೆಯಿಂದ</verse>
				<verse number="7">170 ಮೆಟ್ರಿಕ್ ಟನ್ ಬಂಗಾರವನ್ನೂ 340 ಮೆಟ್ರಿಕ್ ಟನ್ ಬೆಳ್ಳಿಯನ್ನೂ 3400 ಮೆಟ್ರಿಕ್ ಟನ್ ತಾಮ್ರವನ್ನೂ 3400 ಮೆಟ್ರಿಕ್ ಟನ್ ಕಬ್ಬಿಣವನ್ನೂ ಕೊಟ್ಟರು.</verse>
				<verse number="8">ರತ್ನಗಳಿದ್ದವರು ಅವುಗಳನ್ನು ಸರ್ವೇಶ್ವರನ ಆಲಯದ ಭಂಡಾರಕ್ಕಾಗಿ ಗೇರ್ಷೋನ್ಯನಾದ ಯೆಹೀಯೇಲನ ವಶಕ್ಕೆ ಕೊಟ್ಟರು.</verse>
				<verse number="9">ಅವರು ಪೂರ್ಣಮನಸ್ಸಿನಿಂದ ಹಾಗೂ ಸ್ವೇಚ್ಛೆಯಿಂದ ಸರ್ವೇಶ್ವರನಿಗೆ ಕಾಣಿಕೆ ಕೊಟ್ಟಿದ್ದಕ್ಕಾಗಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷ ಆಯಿತು.</verse>
				<verse number="10">ಅನಂತರ ದಾವೀದನು ನೆರೆದ ಸಭೆಯ ಮುಂದೆ ಸರ್ವೇಶ್ವರನನ್ನು ಹೀಗೆ ಸ್ತುತಿಸಿದನು:</verse>
				<verse number="11">“ಹೇ ಸರ್ವೇಶ್ವರಾ, ನಮ್ಮ ಪಿತೃ ಯಕೋಬನ ದೇವರೇ, ಸದಾಕಾಲಕ್ಕೂ ಸ್ತುತಿಸ್ತೋತ್ರ ಸಲ್ಲಲಿ ನಿಮಗೆ! ಹೇ ಸರ್ವೇಶ್ವರಾ, ಮಹಿಮೆ, ಪ್ರತಾಪ, ವೈಭವ, ಪರಾಕ್ರಮ, ಪ್ರತಿಭೆ, ನಿಮ್ಮವೇ, ಭೂಮ್ಯಾಕಾಶಗಳಲ್ಲಿರುವ ಸಮಸ್ತವೂ ನಿಮ್ಮದೇ. ಸರ್ವೇಶ್ವರಾ, ರಾಜ್ಯಭಾರವೂ ನಿಮ್ಮದೇ. ಸರ್ವವನು ಮಹೋನ್ನತರಾಗಿ ಆಳುವವರೂ ನೀವೇ.</verse>
				<verse number="12">ಆಸ್ತಿ - ಪಾಸ್ತಿ, ಐಶ್ವರ್ಯ ಬರುವುದು ನಿಮ್ಮಿಂದಲೇ. ಸರ್ವಾಧಿಕಾರ, ಬಲಪರಾಕ್ರಮ ಇರುವುದು ನಿಮ್ಮ ಕೈಯಲ್ಲೇ. ಪಟ್ಟ ಪದವಿಗೆ, ಸರ್ವಶಕ್ತಿ ಸಾಹಸಕ್ಕೆ ಮೂಲ ನೀವೇ.</verse>
				<verse number="13">ಹೇ, ದೇವಾ, ಸಲ್ಲಿಸುವೆವು ಕೃತಜ್ಞತೆ ನಿಮಗೆ ಹಾಡುವೆವು ಕೀರ್ತನೆ ನಿಮ್ಮ ನಾಮ ಪ್ರತಿಭೆಗೆ!</verse>
				<verse number="14">“ಈ ಪರಿ ಸ್ವೇಚ್ಛೆಯಿಂದ ಕಾಣಿಕೆ ಸಮರ್ಪಿಸಲು ನಾನಾಗಲಿ ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವು ನಿಮ್ಮಿಂದಲೇ; ನೀವು ಕೊಟ್ಟಿದ್ದನ್ನೇ ನಿಮಗೆ ಕೊಟ್ಟೆವು.</verse>
				<verse number="15">ನಾವು ನಿಮ್ಮ ದೃಷ್ಟಿಯಲ್ಲಿ ಪರದೇಶಿಗಳು; ನಮ್ಮ ಪೂರ್ವಜರಂತೆ ಪ್ರವಾಸಿಗಳು. ನಮ್ಮ ಆಯುಷ್ಕಾಲ ನೆರಳಿನಂತೆ; ನಮಗಿಲ್ಲ, ಯಾವ ನಿರೀಕ್ಷೆ.</verse>
				<verse number="16">ನಮ್ಮ ದೇವರಾದ ಸರ್ವೇಶ್ವರಾ, ನಿಮ್ಮ ಶ್ರೀನಾಮಕ್ಕೆ ಒಂದು ನಿಲಯ ನಿರ್ಮಿಸಲು ನಾವು ಸಂಗ್ರಹಿಸಿರುವ ಈ ಎಲ್ಲಾ ವಸ್ತುಗಳು ನಮಗೆ ದೊರಕಿರುವುದು ನಿಮ್ಮಿಂದಲೇ. ಇವೆಲ್ಲವೂ ನಿಮ್ಮವೇ.</verse>
				<verse number="17">ನನ್ನ ದೇವರೇ, ನೀವು ಹೃದಯವನ್ನು ಪರೀಕ್ಷಿಸುವವರು ಹಾಗೂ ಯಥಾರ್ಥಚಿತ್ತರನ್ನು ಮೆಚ್ಚುವವರು ಎಂಬುವುದನ್ನು ನಾನು ಬಲ್ಲೆ. ನಾನಿದನ್ನೆಲ್ಲಾ ಅರ್ಪಿಸಿರುವುದು ಶುದ್ಧಮನಸ್ಸಿನಿಂದಲೇ, ಸ್ವಂತ ಇಷ್ಟದಿಂದಲೇ. ಇಲ್ಲಿ ಕೂಡಿರುವ ನಿಮ್ಮ ಪ್ರಜೆಗಳೂ ಸ್ವಂತ ಇಷ್ಟದಿಂದಲೇ ನಿಮಗೆ ಕಾಣಿಕೆಗಳನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.</verse>
				<verse number="18">ನಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರ ದೇವರೇ, ಸರ್ವೇಶ್ವರಾ, ನಿಮ್ಮ ಪ್ರಜೆಗಳಲ್ಲಿ ಇಂಥ ಮನೋಭಾವ ಸದಾ ಇರುವಂತೆ ಮಾಡಿರಿ; ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ಇರಲು ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸಿರಿ.</verse>
				<verse number="19">ನನ್ನ ಮಗ ಸೊಲೊಮೋನನು ನಿಮ್ಮ ಆಜ್ಞಾವಿಧಿನಿಯಮಗಳನ್ನು ಅನುಸರಿಸುವಂತೆ ಮಾಡಿರಿ; ನಾನು ಯಾವ ಮಂದಿರ ನಿರ್ಮಾಣಕ್ಕಾಗಿ ಇದನ್ನೆಲ್ಲಾ ಸಂಗ್ರಹಿಸಿದ್ದೇನೋ ಆ ನಿಮ್ಮ ಮಂದಿರವನ್ನು ಇವನು ನಿಷ್ಠೆಯಿಂದ ಕಟ್ಟಿಸಿ ಮುಗಿಸುವಂತೆ ಅನುಗ್ರಹಿಸಿರಿ.”</verse>
				<verse number="20">ತರುವಾಯ ದಾವೀದನು ನೆರೆದ ಸಭೆಯವರಿಗೆ, “ನಿಮ್ಮ ದೇವರಾದ ಸರ್ವೇಶ್ವರನನ್ನು ಸ್ತುತಿಸಿರಿ,” ಎಂದು ಹೇಳಿದನು. ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಸ್ತುತಿಸುತ್ತಾ ತಲೆಬಾಗಿ ಅವರನ್ನೂ ಅರಸನನ್ನೂ ನಮಸ್ಕರಿಸಿದರು.</verse>
				<verse number="21">ಮರುದಿನ ಅವರು ಸರ್ವೇಶ್ವರನಿಗೆ ಬಲಿಗಳನ್ನೂ ದಹನಬಲಿಗಳನ್ನೂ ಸಮರ್ಪಿಸಿದರು. ಆ ದಿನ ಬಲಿದಾನಕ್ಕಾಗಿ ಸಾವಿರ ಹೋರಿಗಳನ್ನೂ ಸಾವಿರ ಟಗರುಗಳನ್ನೂ ಸಾವಿರ ಕುರಿಗಳನ್ನೂ ವಧಿಸಿದರು. ಇವುಗಳೊಡನೆ ಅರ್ಪಿಸತಕ್ಕ ಪಾನದ್ರವ್ಯಗಳನ್ನೂ ಇಸ್ರಯೇಲರೆಲ್ಲರಿಗೆ ಸಾಕಾಗುವಷ್ಟು ಸಮಾಧಾನ ಬಲಿಗಳನ್ನೂ ಸಮರ್ಪಿಸಿ</verse>
				<verse number="22">ಸರ್ವೇಶ್ವರನ ಸನ್ನಿಧಿಯಲ್ಲಿ ಮಹಾಸಂತೋಷದಿಂದ ಅನ್ನಪಾನಗಳನ್ನು ತೆಗೆದುಕೊಂಡರು. ದಾವೀದನ ಮಗ ಸೊಲೊಮೋನನನ್ನು ಮತ್ತೆ ಅರಸನನ್ನಾಗಿ ಆರಿಸಿಕೊಂಡು, ಅವನು ರಾಜನಾಗುವುದಕ್ಕೂ ಚಾದೋಕನು ಯಾಜಕನಾಗುವುದಕ್ಕೂ ಅಭಿಷೇಕಿಸಿ, ಸರ್ವೇಶ್ವರನಿಗೆ ಪ್ರತಿಷ್ಠಿಸಿದರು.</verse>
				<verse number="23">ಅಂದಿನಿಂದ ಸೊಲೊಮೋನನು ತನ್ನ ತಂದೆ ದಾವೀದನ ಸ್ಥಾನದಲ್ಲಿ ಅರಸನಾಗಿ, ಸರ್ವೇಶ್ವರನ ಸಿಂಹಾಸನದಲ್ಲಿ ಕುಳಿತುಕೊಂಡು, ವೃದ್ಧಿಯಾಗುತ್ತಾ ಬಂದನು. ಅರಸ ಸೊಲೊಮೋನನಿಗೆ ಇಸ್ರಯೇಲರೆಲ್ಲರೂ ವಿಧೇಯರಾಗಿ ನಡೆದರು.</verse>
				<verse number="24">ಎಲ್ಲಾ ಅಧಿಪತಿಗಳು, ದಂಡಿನವರು, ಹಾಗೂ ಅರಸ ದಾವೀದನ ಎಲ್ಲಾ ಮಕ್ಕಳು ಅವನಿಗೆ ಅಧೀನರಾದರು.</verse>
				<verse number="25">ಸರ್ವೇಶ್ವರ ಇಸ್ರಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿದರು; ಅವನಿಗಿಂತ ಮೊದಲು ಇಸ್ರಯೇಲರನ್ನಾಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದರು.</verse>
				<verse number="26">ಜೆಸ್ಸೆಯನ ಮಗ ದಾವೀದನು ಇಸ್ರಯೇಲರ ಅರಸನಾಗಿ ಹೆಬ್ರೋನಿನಲ್ಲಿ ಏಳು ವರ್ಷ ಹಾಗೂ ಜೆರುಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳಿದನು.</verse>
				<verse number="27"></verse>
				<verse number="28">ಸಿರಿಸಂಪತ್ತು, ಘನತೆ, ಗೌರವ ಹಾಗೂ ದೀರ್ಘಾಯುಷ್ಯ ಇವುಗಳನ್ನು ಅನುಭವಿಸಿದನಂತರ ದಾವೀದನು ಹಣ್ಣುಮುದುಕನಾಗಿ ಮರಣ ಹೊಂದಿದನು. ಅವನ ಉತ್ತರಾಧಿಕಾರಿಯಾಗಿ ಅವನ ಮಗ ಸೊಲೊಮೋನನು ಅರಸನಾದನು.</verse>
				<verse number="29">ದಾವೀದನ ಪೂರ್ವೋತ್ತರ ಚರಿತ್ರೆ, ಅವನ ಆಳ್ವಿಕೆ, ಪರಾಕ್ರಮ ಹಾಗೂ ಅವನಿಗೂ ಇಸ್ರಯೇಲರಿಗೂ ಸುತ್ತಣ ರಾಜ್ಯಗಳಿಗೂ ಸಂಭವಿಸಿದ ಸುಖ-ದುಃಖ, ಇವುಗಳ ವರದಿಯು</verse>
				<verse number="30">ದರ್ಶಿ ಸಮುವೇಲ, ಪ್ರವಾದಿ ನಾತಾನ ಹಾಗೂ ದರ್ಶಿ ಗಾದ, ಇವರ ಚರಿತ್ರೆಗಳಲ್ಲಿ ಲಿಖಿತವಾಗಿವೆ.</verse>
			</chapter>
		</book>
		<book number="14">
			<chapter number="1">
				<verse number="1">ದಾವೀದನ ಮಗ ಸೊಲೊಮೋನನು ತನ್ನ ರಾಜ್ಯದ ಮೇಲೆ ಸಂಪೂರ್ಣ ಪ್ರಭುತ್ವ ಹೊಂದಿದನು. ಅವನ ದೇವರಾದ ಸರ್ವೇಶ್ವರಸ್ವಾಮಿ ಅವನನ್ನು ಹರಸಿ ಮಹಾ ಬಲಾಢ್ಯನಾಗುವಂತೆ ಮಾಡಿದರು.</verse>
				<verse number="2">ಅವನು ತನ್ನ ಸಹಸ್ರಾಧಿಪತಿಗಳನ್ನು, ಶತಾಧಿಪತಿಗಳನ್ನು, ಸರಕಾರದ ಎಲ್ಲ ಪದಾಧಿಕಾರಿಗಳನ್ನು ಹಾಗೂ ಇಸ್ರಯೇಲ್ ಕುಲಗೋತ್ರಗಳ ನಾಯಕರನ್ನು ಬರಮಾಡಿ, ಅವರ ಸಮೇತ ಗಿಬ್ಯೋನಿನಲ್ಲಿದ್ದ ಪೂಜಾಸ್ಥಳಕ್ಕೆ ಹೋದನು.</verse>
				<verse number="3">ಸರ್ವೇಶ್ವರನ ದಾಸನಾದ ಮೋಶೆ ಮರುಭೂಮಿಯಲ್ಲಿ ಮಾಡಿಸಿದ್ದ ದೇವದರ್ಶನದ ಗುಡಾರ ಅಲ್ಲಿಯೇ ಇತ್ತು.</verse>
				<verse number="4">ದಾವೀದನು ದೇವರ ಮಂಜೂಷವನ್ನು, ಈಗಾಗಲೇ ಕಿರ್ಯತ್ಯಾರೀಮಿನಿಂದ ತಾನು ಜೆರುಸಲೇಮಿನಲ್ಲಿ ಅದಕ್ಕೋಸ್ಕರ ಸಿದ್ಧಮಾಡಿದ್ದ ಗುಡಾರಕ್ಕೆ, ತೆಗೆದುಕೊಂಡು ಬಂದಿದ್ದನು.</verse>
				<verse number="5">ಆದರೂ ಊರೀಯನ ಮಗನೂ ಹೂರನ ಮೊಮ್ಮಗನೂ ಆದ ಬೆಚಲೇಲನು ಮಾಡಿಸಿದ್ದ ತಾಮ್ರದ ಬಲಿಪೀಠ, ಅಲ್ಲೇ ಗಿಬ್ಯೋನಿನಲ್ಲಿ ಸರ್ವೇಶ್ವರನ ಗುಡಾರದ ಮುಂದೆ ಇತ್ತು. ಈ ಕಾರಣ ಸೊಲೊಮೋನನೂ ಅವನ ಸಮಾಜದವರೂ ಅಲ್ಲಿಗೆ ದರ್ಶನಕ್ಕಾಗಿ ಹೋಗುತ್ತಿದ್ದರು.</verse>
				<verse number="6">ಸೊಲೊಮೋನನು, ದೇವದರ್ಶನದ ಗುಡಾರದ ಬಳಿ ಸರ್ವೇಶ್ವರನ ಮುಂದಿದ್ದ ಆ ತಾಮ್ರದ ಪೀಠದ ಮೇಲೆ, ಸಾವಿರ ದಹನಬಲಿಗಳನ್ನು ಅರ್ಪಿಸಿದನು.</verse>
				<verse number="7">ಅದೇ ರಾತ್ರಿ ದೇವರು ಸೊಲೊಮೋನನಿಗೆ ದರ್ಶನಕೊಟ್ಟು, “ನಿನಗೆ ಯಾವ ವರಬೇಕು, ಕೇಳಿಕೋ,” ಎಂದು ಹೇಳಿದರು.</verse>
				<verse number="8">ಸೊಲೊಮೋನನು, “ನೀವು ನನ್ನ ತಂದೆ ದಾವೀದನಿಗೆ ಮಹಾಕೃಪೆಯನ್ನು ತೋರಿಸಿದಿರಿ. ಅವರ ಸ್ಥಾನದಲ್ಲಿ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀರಿ.</verse>
				<verse number="9">ಹೀಗೆ ಇರಲಾಗಿ ದೇವರಾದ ಸರ್ವೇಶ್ವರಾ, ನೀವು ನನ್ನ ತಂದೆ ದಾವೀದನಿಗೆ ನುಡಿದದ್ದು ಸಾರ್ಥಕವಾಗಲಿ; ಧರೆಯ ಧೂಳಿನಷ್ಟು ಅಸಂಖ್ಯವಾದ ಜನಾಂಗದ ಮೇಲೆ ನನ್ನನ್ನು ಅರಸನನ್ನಾಗಿ ನೇಮಿಸಿದ್ದೀರಿ.</verse>
				<verse number="10">ನಿಮ್ಮ ಪ್ರಜೆಯಾದ ಈ ಮಹಾಜನಾಂಗವನ್ನು ಆಳುವುದಕ್ಕೆ ಸಮರ್ಥರಾರು! ನಾನು ಈ ಜನರ ನಾಯಕನಾಗಿ ಇವರನ್ನು ಪರಿಪಾಲಿಸುವುದಕ್ಕೆ ಬೇಕಾದ ಜ್ಞಾನ ವಿವೇಕಗಳನ್ನು ನನಗೆ ಅನುಗ್ರಹಿಸಿರಿ,” ಎಂದು ದೇವರನ್ನು ಬೇಡಿಕೊಂಡನು.</verse>
				<verse number="11">ಆಗ ದೇವರು ಸೊಲೊಮೋನನಿಗೆ, “ನೀನು ಘನಧನೈಶ್ವರ್ಯಗಳನ್ನಾಗಲಿ, ಶತ್ರುಗಳ ವಿನಾಶವನ್ನಾಗಲಿ, ದೀರ್ಘಾಯುಷ್ಯವನ್ನಾಗಲಿ ಕೇಳಿಕೊಳ್ಳಲಿಲ್ಲ. ಬದಲಿಗೆ ನಾನು ಯಾರ ಮೇಲೆ ನಿನ್ನನ್ನು ಅರಸನನ್ನಾಗಿ ಮಾಡಿದೆನೋ ಆ ನನ್ನ ಪ್ರಜೆಗಳನ್ನು ಪಾಲಿಸುವುದಕ್ಕೆ ಬೇಕಾದ ಜ್ಞಾನ ವಿವೇಕಗಳ ಮೇಲೆ ಮನಸ್ಸಿಟ್ಟು ಅವುಗಳನ್ನು ನಿನಗಾಗಿ ಬೇಡಿಕೊಂಡೆ. ಆದುದರಿಂದ ಅವು ನಿನಗೆ ದೊರಕುವುವು.</verse>
				<verse number="12">ಇದಲ್ಲದೆ, ನಾನು ನಿನಗೆ ಘನಧನೈಶ್ವರ್ಯಗಳನ್ನೂ ಅನುಗ್ರಹಿಸುತ್ತೇನೆ. ಇಂಥ ಘನಧನೈಶ್ವರ್ಯಗಳು ನಿನಗಿಂತ ಮೊದಲಿದ್ದ ಅರಸರಲ್ಲಿ ಯಾರಿಗೂ ಇರಲಿಲ್ಲ, ನಿನ್ನ ಅನಂತರದವರಿಗೂ ಇರುವುದಿಲ್ಲ,” ಎಂದರು.</verse>
				<verse number="13">ಆಮೇಲೆ ಅರಸ ಸೊಲೊಮೋನನು ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದ ದೇವದರ್ಶನದ ಗುಡಾರದಿಂದ ಜೆರುಸಲೇಮಿಗೆ ಬಂದು ಇಸ್ರಯೇಲ್ ರಾಜ್ಯವನ್ನು ಆಳಿದನು.</verse>
				<verse number="14">ರಥಗಳನ್ನೂ ರಾಹುತರನ್ನೂ ಸಂಗ್ರಹಿಸಿದನು. ಅವನಿಗಿದ್ದ ರಥಗಳು ಸಾವಿರದ ನಾನೂರು; ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಜೆರುಸಲೇಮಿನಲ್ಲೇ ಇಟ್ಟುಕೊಂಡನು. ಉಳಿದವುಗಳನ್ನು ರಥಗಳಿಗಾಗಿಯೇ ನೇಮಿಸಿದ್ದ ಪಟ್ಟಣಗಳಲ್ಲಿ ಇರಿಸಿದನು.</verse>
				<verse number="15">ಅವನ ಕಾಲದಲ್ಲಿ ಬೆಳ್ಳಿಬಂಗಾರ ಕಲ್ಲಿನಂತೆಯೂ, ದೇವದಾರು ಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆಯೂ ಜೆರುಸಲೇಮಿನಲ್ಲಿ ವಿಫುಲವಾಗಿದ್ದವು.</verse>
				<verse number="16">ಅರಸ ಸೊಲೊಮೋನನ ಕುದುರೆಗಳು ಈಜಿಪ್ಟ್ ದೇಶದವುಗಳು. ಅವನ ವರ್ತಕರು ಅವುಗಳನ್ನು ಹಿಂಡುಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು.</verse>
				<verse number="17">ರಥಕ್ಕೆ ಆರುನೂರು ಬೆಳ್ಳಿನಾಣ್ಯಗಳಂತೆ, ಕುದುರೆಗೆ ನೂರೈವತ್ತು ಬೆಳ್ಳಿನಾಣ್ಯಗಳಂತೆ ಕೊಟ್ಟು, ರಥಗಳನ್ನೂ ಕುದುರೆಗಳನ್ನೂ ಈಜಿಪ್ಟ್ ದೇಶದಿಂದ ತರಿಸುತ್ತಿದ್ದರು; ಹಿತ್ತಿಯರ ಮತ್ತು ಸಿರಿಯಾದವರ ಎಲ್ಲಾ ಅರಸರು ಇವರ ಮುಖಾಂತರವೇ ತರಿಸುತ್ತಿದ್ದರು.</verse>
			</chapter>
			<chapter number="2">
				<verse number="1">ಸೊಲೊಮೋನನು ಸರ್ವೇಶ್ವರನ ಹೆಸರಿಗಾಗಿ ಒಂದು ಅರಮನೆಯನ್ನು ಕಟ್ಟಿಸಬೇಕೆಂದು ಮನಸ್ಸುಮಾಡಿದನು.</verse>
				<verse number="2">ಇಪ್ಪತ್ತು ಸಾವಿರ ಮಂದಿ ಹೊರೆಹೊರುವವರೂ ಎಂಬತ್ತು ಸಾವಿರ ಮಂದಿ ಕಲ್ಲುಗಣಿಯಲ್ಲಿ ಕೆಲಸಮಾಡುವವರನ್ನೂ ಇವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿ ಮೇಸ್ತ್ರಿಗಳನ್ನೂ ಎಣಿಸಿ ನೇಮಿಸಿದನು.</verse>
				<verse number="3">ಇದಲ್ಲದೆ, ಟೈರಿನ ಅರಸ ಹೂರಾಮನಿಗೆ ದೂತರ ಮುಖಾಂತರ, “ನನ್ನ ತಂದೆ ದಾವೀದ ತಮ್ಮ ವಾಸಕ್ಕೆ ಅರಮನೆಯನ್ನು ಕಟ್ಟಿಸಿಕೊಳ್ಳುವುದಕ್ಕಾಗಿ ನೀನು ದೇವದಾರು ಮರಗಳನ್ನು ಕಳುಹಿಸಿದೆ.</verse>
				<verse number="4">ಈಗ ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಇಸ್ರಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ ಅವರ ಸನ್ನಿಧಿಯಲ್ಲಿ ಸುಗಂಧ ದ್ರವ್ಯಗಳಿಂದ ಧೂಪಾರತಿ ಎತ್ತಬೇಕಾಗಿದೆ. ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡಬೇಕಾಗಿದೆ; ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗೂ ನಮ್ಮ ದೇವರಾದ ಸರ್ವೇಶ್ವರನ ಜಾತ್ರೆಯ ವೇಳೆಗಳಲ್ಲಿ ದಹನಬಲಿಗಳನ್ನು ಅರ್ಪಿಸಬೇಕಾಗಿದೆ. ಇದಕ್ಕಾಗಿ ಒಂದು ಆಲಯವನ್ನು ಅವರಿಗೆ ಪ್ರತಿಷ್ಠಿಸಬೇಕೆಂದಿದ್ದೇನೆ.</verse>
				<verse number="5">ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವರು! ನಾನು ಕಟ್ಟಿಸುವ ಆಲಯವೂ ದೊಡ್ಡದಾಗಿರಬೇಕು.</verse>
				<verse number="6">ಅವರಿಗೆ ಆಲಯವನ್ನು ಕಟ್ಟುವುದಕ್ಕೆ ಯಾರೂ ಶಕ್ತರಲ್ಲ; ಆಕಾಶವೂ ಉನ್ನತೋನ್ನತವಾದ ಆಕಾಶವೂ ಅವರ ವಾಸಕ್ಕೆ ಸಾಲದಿರುವಲ್ಲಿ ಅವರಿಗಾಗಿ ಆಲಯವನ್ನು ಕಟ್ಟುವುದಕ್ಕೆ ಯಾರು ತಾನೆ ಶಕ್ತರು? ನಾನು ಅವರ ಸನ್ನಿಧಿಯಲ್ಲಿ ಧೂಪಾರತಿ ಎತ್ತುವ ಒಂದು ಸ್ಥಳವನ್ನು ಕಟ್ಟಿಸಬಲ್ಲೆನೇ ಹೊರತು, ಅವರ ವಾಸಕ್ಕಾಗಿ ಆಲಯವನ್ನು ಕಟ್ಟಿಸುವುದಕ್ಕೆ ನಾನು ಎಷ್ಟು ಮಾತ್ರಕ್ಕೂ ಶಕ್ತನಲ್ಲ.</verse>
				<verse number="7">ಹೀಗಿರಲು, ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ ಇವುಗಳ ಕೆಲಸಮಾಡುವುದರಲ್ಲಿ, ಊದಾ, ಕೆಂಪು, ನೀಲವರ್ಣಗಳ ಬಟ್ಟೆಯನ್ನು ನೇಯುವುದರಲ್ಲಿ ಹಾಗೂ ಚಿತ್ರ ಕೆತ್ತುವುದರಲ್ಲಿ ನಿಪುಣನಾದ ಒಬ್ಬ ವ್ಯಕ್ತಿಯನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆ ಗೊತ್ತುಮಾಡಿದಂಥ ಮತ್ತು ನನ್ನೊಡನೆ ಜುದೇಯದಲ್ಲೂ, ಜೆರುಸಲೇಮಿನಲ್ಲೂ ಇರುವಂಥ ಕಲಾಕುಶಲರೊಂದಿಗೆ ಅವನು ಕೆಲಸಮಾಡಲಿ.</verse>
				<verse number="8">ಅಂತೆಯೇ ಲೆಬನೋನಿನಿಂದ ದೇವದಾರು ಮರವನ್ನೂ ತುರಾಯಿಮರವನ್ನೂ ಸುಗಂಧದ ಮರವನ್ನೂ ನನಗೆ ಕಳುಹಿಸಬೇಕು. ನಿನ್ನ ಆಳುಗಳು ಲೆಬನೋನಿನ ಮರಗಳನ್ನು ಕಡಿಯುವುದರಲ್ಲಿ ಜಾಣರೆಂದು ನನಗೆ ಗೊತ್ತಿದೆ. ನಿನ್ನ ಆಳುಗಳ ಜೊತೆಯಲ್ಲಿ ನನ್ನ ಆಳುಗಳೂ ಕೆಲಸಮಾಡುವರು.</verse>
				<verse number="9">ಬೃಹದಾಕಾರವಾದ ಹಾಗೂ ಭವ್ಯವಾದ ದೇವಾಲಯವನ್ನು ನಾನು ಕಟ್ಟಿಸಬೇಕಾಗಿದೆ. ಆದುದರಿಂದ ಹೆಚ್ಚು ಮರವನ್ನು ಸಿದ್ಧಪಡಿಸಬೇಕು.</verse>
				<verse number="10">ಮರ ಕಡಿಯುವ ನಿನ್ನ ಆಳುಗಳಿಗಾಗಿ ಎರಡು ಸಾವಿರ ಮೆಟ್ರಿಕ್ ಟನ್ ಗೋದಿ, ಎರಡು ಸಾವಿರ ಮೆಟ್ರಿಕ್ ಟನ್ ಜವೆಗೋದಿ, ನಾಲ್ಕು ಲಕ್ಷ ಲೀಟರ್ ದ್ರಾಕ್ಷಾರಸ ಹಾಗೂ ನಾಲ್ಕು ಲಕ್ಷ ಲೀಟರ್ ಎಣ್ಣೆ ಇವುಗಳನ್ನು ಕೊಡುವೆನು,” ಎಂದು ಹೇಳಿಸಿದನು.</verse>
				<verse number="11">ಟೈರಿನ ಅರಸ ಹೂರಾಮನು ಪತ್ರದ ಮೂಲಕ ಸೊಲೊಮೋನನಿಗೆ, “ಸರ್ವೇಶ್ವರ ತಮ್ಮ ಪ್ರಜೆಗಳನ್ನು ಪ್ರೀತಿಸುವವರು. ಆದುದರಿಂದ ನಿನ್ನನ್ನು ಆ ಜನರ ಅರಸನನ್ನಾಗಿ ನೇಮಿಸಿದ್ದಾರೆ.</verse>
				<verse number="12">ಭೂಮ್ಯಾಕಾಶಗಳನ್ನು ಉಂಟುಮಾಡಿದ ಇಸ್ರಯೇಲ್ ದೇವರಾದ ಸರ್ವೇಶ್ವರ ತಮಗಾಗಿ ಒಂದು ದೇವಾಲಯವನ್ನೂ ರಾಜನಿಗೋಸ್ಕರ ಒಂದು ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ, ಜ್ಞಾನ ಹಾಗೂ ವಿವೇಕಗಳುಳ್ಳ ಒಬ್ಬ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟಿದ್ದಾರೆ; ಅವರಿಗೆ ಸ್ತೋತ್ರವಾಗಲಿ!</verse>
				<verse number="13">ನಾನು ಈಗ ಜ್ಞಾನಿಯೂ ಕಲಾಪ್ರವೀಣನೂ ಆದ ಒಬ್ಬ ವ್ಯಕ್ತಿಯನ್ನು ಕಳುಹಿಸುತ್ತೇನೆ; ಇವನ ಹೆಸರು ಹೂರಾಮಾಬೀ.</verse>
				<verse number="14">ಇವನು ದಾನ್ ಕುಲದ ಒಬ್ಬ ಸ್ತ್ರೀಯ ಮಗ; ಅವನ ತಂದೆ ಟೈರಿನವನು. ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಕಲ್ಲು, ಮರ ಇವುಗಳ ಕೆಲಸವನ್ನು ಮಾಡುವುದಕ್ಕೂ ಊದಾ, ನೀಲಿ, ಕೆಂಪುವರ್ಣಗಳುಳ್ಳ ನಾರುಬಟ್ಟೆಗಳನ್ನು ನೇಯುವುದಕ್ಕೂ ಎಲ್ಲಾ ತರದ ಕೆತ್ತನೆಯ ಕೆಲಸ ಮಾಡುವುದಕ್ಕೂ ತನಗೆ ಒಪ್ಪಿಸಲಾಗುವ ಎಲ್ಲಾ ಕಲಾತ್ಮಕ ಕೆಲಸಗಳನ್ನು ನಡೆಸುವುದಕ್ಕೂ ಇವನು ಸಮರ್ಥನು. ನೀನೂ ನಿನ್ನ ತಂದೆ ದಾವೀದನೂ ಗೊತ್ತುಮಾಡಿದ ಕಲಾಕುಶಲರೊಡನೆ ಇವನು ಕೆಲಸಮಾಡಲಿ.</verse>
				<verse number="15">ಈಗ ನನ್ನ ಒಡೆಯರಾದ ತಾವು ಮಾತುಕೊಟ್ಟ ಮೇರೆಗೆ ಗೋದಿ, ಜವೆಗೋದಿ, ಎಣ್ಣೆ, ದ್ರಾಕ್ಷಾರಸ ಇವುಗಳನ್ನು ತನ್ನ ಸೇವಕರಿಗೆ ಕಳುಹಿಸಬೇಕು.</verse>
				<verse number="16">ನಾವಾದರೋ ತಮಗೆ ಬೇಕಾದ ಎಲ್ಲಾ ಮರಗಳನ್ನು ಲೆಬನೋನಿನಲ್ಲಿ ಕಡಿದು, ತೆಪ್ಪಗಳಾಗಿ ಕಟ್ಟಿ, ಸಮುದ್ರಮಾರ್ಗವಾಗಿ ಜೊಪ್ಪಕ್ಕೆ ಕಳುಹಿಸುವೆವು; ಅಲ್ಲಿಂದ ನೀವು ಅವುಗಳನ್ನು ಜೆರುಸಲೇಮಿಗೆ ತರಿಸಿಕೊಳ್ಳಬಹುದು,” ಎಂದು ಉತ್ತರಕೊಟ್ಟನು.</verse>
				<verse number="17">ಸೊಲೊಮೋನನು, ತನ್ನ ತಂದೆ ದಾವೀದನು ಮಾಡಿಸಿದ ಜನಗಣತಿಯ ಆಧಾರದಿಂದ, ಇಸ್ರಯೇಲ್ ನಾಡಿನಲ್ಲಿ ಪ್ರವಾಸಿಗಳಾಗಿದ್ದ ಎಲ್ಲಾ ಅನ್ಯಜನರನ್ನು ಲೆಕ್ಕಿಸಿದನು. ಅವರು ಒಂದು ಲಕ್ಷ ಐವತ್ತಮೂರು ಸಾವಿರದ ಆರುನೂರು ಮಂದಿ ಇದ್ದರು.</verse>
				<verse number="18">ಅವರಲ್ಲಿ ಹೊರೆಹೊರುವುದಕ್ಕಾಗಿ ಎಪ್ಪತ್ತು ಸಾವಿರ ಮಂದಿಯನ್ನೂ ಕಲ್ಲುಗಣಿಗಳಲ್ಲಿ ಕೆಲಸಮಾಡುವುದಕ್ಕಾಗಿ ಎಂಬತ್ತು ಸಾವಿರ ಮಂದಿಯನ್ನೂ ಕೆಲಸದವರ ಮೇಲ್ವಿಚಾರಣೆಗಾಗಿ ಮೂರು ಸಾವಿರದ ಆರುನೂರು ಮಂದಿಯನ್ನೂ ನೇಮಿಸಿದನು.</verse>
			</chapter>
			<chapter number="3">
				<verse number="1">ಸೊಲೊಮೋನನು ಜೆರುಸಲೇಮ್ ಪಟ್ಟಣದಲ್ಲಿ ತನ್ನ ತಂದೆ ದಾವೀದನಿಗೆ ದೇವದರ್ಶನ ಉಂಟಾದ ಮೋರೀಯಾ ಗುಡ್ಡದಲ್ಲಿ, ಸರ್ವೇಶ್ವರನ ಆಲಯವನ್ನು ಕಟ್ಟಿಸ ತೊಡಗಿದನು. ಈ ಮೊದಲು, ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು, ದಾವೀದನು ಇದಕ್ಕಾಗಿ ಸಿದ್ಧಮಾಡಿದ್ದನು.</verse>
				<verse number="2">ಸೊಲೊಮೋನನು ತನ್ನ ಆಳ್ವಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಿನ ಎರಡನೆಯ ದಿನದಲ್ಲಿ ಕಟ್ಟಡದ ಕೆಲಸವನ್ನು ಪ್ರಾರಂಭಿಸಿದನು.</verse>
				<verse number="3">ಅವನು ಕಟ್ಟಿಸಿದ ದೇವಾಲಯದ ಅಸ್ತಿವಾರದ ಉದ್ದ ಇಪ್ಪತ್ತೇಳು ಮೀಟರ್ ಹಾಗೂ ಅಗಲ ಒಂಬತ್ತು ಮೀಟರ್.</verse>
				<verse number="4">ದೇವಾಲಯದ ಮುಂದುಗಡೆಯಲ್ಲಿದ್ದ ಮಂಟಪದ ಉದ್ದ ಆಲಯದ ಅಗಲಕ್ಕೆ ಸರಿಯಾಗಿ ಒಂಬತ್ತು ಮೀಟರ್, ಎತ್ತರ ಇಪ್ಪತ್ತನಾಲ್ಕು ಮೀಟರ್, ಸೊಲೊಮೋನನು ದೇವಾಲಯದ ಒಳಮೈಯನ್ನು ಚೊಕ್ಕಬಂಗಾರದ ತಗಡಿನಿಂದ ಹೊದಿಸಿದನು.</verse>
				<verse number="5">ದೊಡ್ಡ ಕೋಣೆಯನ್ನು ತುರಾಯಿ ಮರದ ಹಲಗೆಗಳಿಂದಲೂ ಆ ಹಲಗೆಗಳನ್ನು ತೋರಣ, ಖರ್ಜೂರಗಳ ಚಿತ್ರಗಳುಳ್ಳ ಚೊಕ್ಕ ಬಂಗಾರದ ತಗಡಿನಿಂದಲೂ ಹೊದಿಸಿ, ಅದನ್ನು ರತ್ನಗಳಿಂದ ಅಲಂಕರಿಸಿದನು.</verse>
				<verse number="6">ಆ ಬಂಗಾರ ಪರ್ವಯಿಮ್ ದೇಶದ್ದು.</verse>
				<verse number="7">ಹೀಗೆ ಆಲಯದಲ್ಲಿನ ತೊಲೆ, ಹೊಸ್ತಿಲು, ಗೋಡೆ, ಕದ ಇವುಗಳನ್ನು ಬಂಗಾರದ ತಗಡಿನಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳ ಚಿತ್ರಗಳನ್ನು ಕೆತ್ತಿಸಿದನು.</verse>
				<verse number="8">ಇದಲ್ಲದೆ, ಅವನು ‘ಮಹಾಪರಿಶುದ್ಧ ಸ್ಥಳವನ್ನು’ ಮಾಡಿಸಿದನು.ಅದರ ಉದ್ದ ಆಲಯದ ಅಗಲಕ್ಕೆ ಸರಿಯಾಗಿ ಒಂಬತ್ತು ಮೀಟರ್; ಅದರ ಅಗಲ ಒಂಬತ್ತು ಮೀಟರ್. ಅದನ್ನು ಸುಮಾರು 20 ಮೆಟ್ರಿಕ್ ಟನ್ ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು.</verse>
				<verse number="9">ಬಂಗಾರದ ಮೊಳೆಗಳ ತೂಕ 570 ಕಿಲೋಗ್ರಾಂ. ಮೇಲುಪ್ಪರಿಗೆಗಳನ್ನು ಬಂಗಾರದ ತಗಡಿನಿಂದ ಹೊದಿಸಿದನು.</verse>
				<verse number="10">ಮಹಾಪರಿಶುದ್ಧ ಸ್ಥಳದಲ್ಲಿ ಎರಡು ಕೆರೂಬಿಗಳ ಪ್ರತಿಮೆಗಳನ್ನು ಮಾಡಿಸಿಟ್ಟು ಅವುಗಳನ್ನೂ ಬಂಗಾರದ ತಗಡಿನಿಂದ ಹೊದಿಸಿದನು.</verse>
				<verse number="11">ಕೆರೂಬಿಗಳ ರೆಕ್ಕೆಗಳು ಒಟ್ಟಾಗಿ ಒಂಬತ್ತು ಮೀಟರ್ ಉದ್ದವಿದ್ದವು. (ಮೊದಲನೆಯ ಕೆರೂಬಿಯ) ಒಂದು ರೆಕ್ಕೆ 2:2 ಮೀಟರ್ ಉದ್ದವಾಗಿದ್ದು ಮನೆಯ ಗೋಡೆಗೆ ತಗಲುತ್ತಿತ್ತು. 2:2 ಮೀಟರ್ ಉದ್ದವಾದ ಇನ್ನೊಂದು ರೆಕ್ಕೆಯು ಎರಡನೆಯ ಕೆರೂಬಿಯ ರೆಕ್ಕೆಗೆ ತಗಲುತ್ತಿತ್ತು.</verse>
				<verse number="12">ಅದರಂತೆಯೇ ಎರಡನೆಯ ಕೆರೂಬಿಯ 2:2 ಮೀಟರ್ ಉದ್ದವಾದ ಒಂದು ರೆಕ್ಕೆ ಮನೆಯ ಗೋಡೆಗೂ ಇನ್ನೊಂದು ರೆಕ್ಕೆ ಮೊದಲನೆಯ ಕೆರೂಬಿಯ ರೆಕ್ಕೆಗೂ ತಗಲುತ್ತಿದ್ದವು.</verse>
				<verse number="13">ಈ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಒಂಬತ್ತು ಮೀಟರ್ ಉದ್ದಕ್ಕೆ ಚಾಚಿ ಕಾಲೂರಿ ನಿಂತುಕೊಂಡು ಪರಿಶುದ್ಧ ಸ್ಥಳದ ಕಡೆಗೆ ಮುಖ ಮಾಡಿದ್ದವು.</verse>
				<verse number="14">ಸೊಲೊಮೋನನು ಪರದೆಯನ್ನು ನೀಲಿ, ಊದಾ, ಕೆಂಪು ವರ್ಣಗಳುಳ್ಳ ನಾರಿನಿಂದ ಮಾಡಿಸಿದನು. ಅದರಲ್ಲಿ ಕೆರೂಬಿಗಳನ್ನು ಕಸೂತಿ ಹಾಕಿಸಿದನು.</verse>
				<verse number="15">ಇದಲ್ಲದೆ ಸೊಲೊಮೋನನು ದೇವಾಲಯದ ಮುಂದೆ ಎರಡು ಕಂಬಗಳನ್ನು ನಿಲ್ಲಿಸಿದನು. ಅವು 5:5 ಮೀಟರ್ ಎತ್ತರ ಇದ್ದವು. ಅವುಗಳ ತಲೆಗಳ ಮೇಲಣ ಕುಂಭಗಳು 2:2 ಮೀಟರ್ ಎತ್ತರವಿದ್ದವು.</verse>
				<verse number="16">ಗರ್ಭಗುಡಿಯ ಸರಪಣಿಯಂಥ ಸರಪಣಿಗಳನ್ನು ಮಾಡಿಸಿ, ಆ ಕಂಬಗಳ ಮೇಲಣ ಕುಂಭಗಳಿಗೆ ಸಿಕ್ಕಿಸಿ, ಆ ಸರಪಣಿಗಳಲ್ಲಿ ನೂರು ನೂರು ತಾಮ್ರದ ದಾಳಿಂಬೆ ಹಣ್ಣುಗಳನ್ನು ಕಟ್ಟಿಸಿದನು.</verse>
				<verse number="17">ಆ ಕಂಬಗಳನ್ನು, ದೇವಾಲಯದ ಮುಂಭಾಗದಲ್ಲಿ ಒಂದನ್ನು ಬಲಗಡೆಗೂ, ಇನ್ನೊಂದನ್ನು ಎಡಗಡೆಗೂ ನಿಲ್ಲಿಸಿ, ಬಲಗಡೆಯದಕ್ಕೆ ‘ಯಾಕೀನ್’ ಎಂದೂ ಎಡಗಡೆಯದಕ್ಕೆ ‘ಬೋವಜ್’ ಎಂದೂ ಹೆಸರಿಟ್ಟನು.</verse>
			</chapter>
			<chapter number="4">
				<verse number="1">ಇದಲ್ಲದೆ, ಸೊಲೊಮೋನನು ತಾಮ್ರದ ಬಲಿಪೀಠವನ್ನು ಮಾಡಿಸಿದನು. ಅದರ ಉದ್ದ ಒಂಬತ್ತು ಮೀಟರ್, ಅಗಲ ಒಂಬತ್ತು ಮೀಟರ್, ಎತ್ತರ 4:5 ಮೀಟರ್,</verse>
				<verse number="2">ಅನಂತರ ಅವನು ‘ಕಂಚಿನ ಕಡಲು’ ಎನಿಸಿಕೊಳ್ಳುವ ಎರಕದ ಒಂದು ದೊಡ್ಡ ಪಾತ್ರೆಯನ್ನು ಮಾಡಿಸಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ 4:4 ಮೀಟರ್ ಇತ್ತು. ಅದರ ಎತ್ತರ 2:2 ಮೀಟರ್, ಸುತ್ತಳತೆ 13:2 ಮೀಟರ್,</verse>
				<verse number="3">ಅದನ್ನು ಎರಕಹೊಯ್ಯುವಾಗ ಅದರ (ಅಂಚಿನ) ಕೆಳಗೆ ಸುತ್ತಲೂ ಮೊಳಕ್ಕೆ ಹತ್ತರಂತೆ ಹೋರಿಗಳ ಚಿತ್ರಗಳನ್ನು ಎರಡು ಸಾಲಾಗಿ ಎರಕ ಹೊಯ್ಸಿದನು.</verse>
				<verse number="4">ಹನ್ನೆರಡು ಎರಕದ ಹೋರಿಗಳು ಅದನ್ನು ಹೊತ್ತಿದ್ದವು. ಅವುಗಳಲ್ಲಿ ಮೂರು ಉತ್ತರ ದಿಕ್ಕಿಗೂ ಮೂರು ಪಶ್ಚಿಮ ದಿಕ್ಕಿಗೂ ಮೂರು ದಕ್ಷಿಣ ದಿಕ್ಕಿಗೂ ಮೂರು ಪೂರ್ವ ದಿಕ್ಕಿಗೂ ಮುಖ ಮಾಡಿಕೊಂಡಿದ್ದವು. ಕಂಚಿನ ಕಡಲು ಅವುಗಳ ಬೆನ್ನಿನ ಮೇಲಿತ್ತು. ಅವುಗಳ ಹಿಂಭಾಗವು ಒಳಗಡೆಗಿತ್ತು.</verse>
				<verse number="5">ಆ ಪಾತ್ರೆಯ ತಗಡು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲಾಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು ಅರವತ್ತು ಸಾವಿರ ಲೀಟರ್ ನೀರನ್ನು ಹಿಡಿಯುತ್ತಿತ್ತು.</verse>
				<verse number="6">ಇದಲ್ಲದೆ ಅವನು ಹತ್ತು ನೀರಿನ ಬಾನೆಗಳನ್ನು ಮಾಡಿಸಿ ದಹನಬಲಿ ಸಮರ್ಪಣೆಯ ಸಾಮಾನುಗಳನ್ನು ತೊಳೆದು ಶುದ್ಧಮಾಡುವುದಕ್ಕಾಗಿ ಐದನ್ನು ಬಲಗಡೆಯಲ್ಲಿಯೂ ಐದನ್ನು ಎಡಗಡೆಯಲ್ಲಿಯೂ ಇಡಿಸಿದನು; ಕಡಲು ಎನಿಸಿಕೊಳ್ಳುವ ಪಾತ್ರೆ ಯಾಜಕರ ಸ್ನಾನಕ್ಕಾಗಿ ಇತ್ತು.</verse>
				<verse number="7">ಅದೂ ಅಲ್ಲದೆ ನೇಮಕವಾದ ಮಾದರಿಯಂತೆ ಬಂಗಾರದ ಹತ್ತು ದೀಪಸ್ತಂಭಗಳನ್ನು ಮಾಡಿಸಿ, ಐದನ್ನು ದೇವಾಲಯದೊಳಗೆ ಬಲಗಡೆಯಲ್ಲೂ ಐದನ್ನು ಎಡಗಡೆಯಲ್ಲೂ ಇಡಿಸಿದನು.</verse>
				<verse number="8">ಹತ್ತು ಮೇಜುಗಳನ್ನು ಮಾಡಿಸಿ ದೇವಾಲಯದೊಳಗೆ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇಡಿಸಿ ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.</verse>
				<verse number="9">ಮತ್ತೆ, ಯಾಜಕರ ಪ್ರಾಕಾರವನ್ನೂ ಮಹಾಪ್ರಾಕಾರವನ್ನೂ ಮಾಡಿಸಿ ಮಹಾಪ್ರಾಕಾರಕ್ಕೆ ಬಾಗಿಲುಗಳನ್ನೂ ಇಟ್ಟನು. ಅವುಗಳ ಕದಗಳನ್ನು ಕಂಚಿನ ತಗಡಿನಿಂದ ಹೊದಿಸಿದನು.</verse>
				<verse number="10">ಕಡಲು ಎನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ, ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿ ಇರಿಸಿದನು.</verse>
				<verse number="11">ಇದಲ್ಲದೆ, ಹೂರಾಮನು ಹಂಡೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಈ ಹೂರಾಮನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕಾಗಿ ಮಾಡಿದ ಸಾಮಾನುಗಳು ಇವು:</verse>
				<verse number="12">ಎರಡು ಕಂಬಗಳು, ಅವುಗಳ ಮೇಲಣ ಕುಂಭಾಕಾರದ ಎರಡು ತಲೆಗಳು, ಕುಂಭಗಳ ಮೇಲೆ ಹಾಕುವುದಕ್ಕಾಗಿ ಎರಡು ಜಾಲರಿಗಳು,</verse>
				<verse number="13">ಕಂಬಗಳ ತುದಿಯಲ್ಲಿರುವ ಕುಂಭಗಳ ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸುವುದಕ್ಕಾಗಿ ತಾಮ್ರದ ನಾನೂರು ದಾಳಿಂಬೆ ಹಣ್ಣುಗಳು, ಪೀಠಗಳು,</verse>
				<verse number="14">ಅವುಗಳ ಮೇಲಣ ಬಾನೆಗಳು, ಕಡಲಕೊಳ ಎನಿಸಿಕೊಳ್ಳುವ ಎರಕದ ಪಾತ್ರೆ,</verse>
				<verse number="15">ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು,</verse>
				<verse number="16">ಹಂಡೆ, ಸಲಿಕೆ ಹಾಗೂ ಮುಳ್ಳು, ಹೀಗೆ ಹೂರಾಮಾಬೀಮನು ಅರಸ ಸೊಲೊಮೋನನ ಅಪ್ಪಣೆಯ ಮೇರೆಗೆ ಸರ್ವೇಶ್ವರನ ಆಲಯಕ್ಕಾಗಿ ಅದರ ಎಲ್ಲಾ ಸಾಮಾನುಗಳನ್ನು ಒಪ್ಪಹಾಕಿದ ಕಂಚಿನಿಂದ ಮಾಡಿ ಮುಗಿಸಿದನು.</verse>
				<verse number="17">ಅರಸನು ಜೋರ್ಡನ್ ತಗ್ಗಿನಲ್ಲಿ ಸುಕ್ಕೋತಿಗೂ ಚೆರೇದಕ್ಕೂ ಮಧ್ಯದಲ್ಲಿರುವ ಕುಲುಮೆಯಲ್ಲಿ ಎರಕ ಹೊಯ್ಸಿದನು.</verse>
				<verse number="18">ಸೊಲೊಮೋನನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದರಿಂದ ಅವುಗಳ ತಾಮ್ರದ ತೂಕ ಎಷ್ಟೆಂಬುದು ಗೊತ್ತಾಗದೆ ಹೋಯಿತು.</verse>
				<verse number="19">ಅವನು ದೇವಾಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಗ್ರಿ ಇವು: ಬಂಗಾರದ ಧೂಪವೇದಿ, ನೈವೇದ್ಯವಾದ ರೊಟ್ಟಿಗಳನ್ನಿಡತಕ್ಕ ಮೇಜುಗಳು,</verse>
				<verse number="20">ನಿಯಮದ ಪ್ರಕಾರ ಮಹಾಪರಿಶುದ್ಧ ಸ್ಥಳದ ಮುಂದೆ ಉರಿಯುತ್ತಿರುವುದಕ್ಕಾಗಿ ಪುಷ್ಪಾಲಂಕಾರವುಳ್ಳ ಬಂಗಾರದ ದೀಪಸ್ತಂಭಗಳು,</verse>
				<verse number="21">ಉತ್ಕೃಷ್ಟವಾದ ಬಂಗಾರದಿಂದ ಮಾಡಿದ ಅವುಗಳ ಹಣತೆ, ತಂಡಸ,</verse>
				<verse number="22">ಚೊಕ್ಕ ಬಂಗಾರದ ಕತ್ತರಿ, ಬೋಗುಣಿ, ಧೂಪಾರತಿ, ಅಗ್ಗಿಷ್ಟಿಕೆ, ದೇವಾಲಯದ ಮಹಾಪರಿಶುದ್ಧ ಸ್ಥಳದೊಳಗಿನ ಬಾಗಿಲಿನ ಬಂಗಾರದ ಕದಗಳು, ಪರಿಶುದ್ಧ ಸ್ಥಳದ ಬಂಗಾರದ ಕದಗಳು.</verse>
			</chapter>
			<chapter number="5">
				<verse number="1">ಸೊಲೊಮೋನನು ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ ತನ್ನ ತಂದೆ ದಾವೀದನು ಸರ್ವೇಶ್ವರನಿಗೆ ಹರಕೆಹೊತ್ತು ಮುಡಿಪಾಗಿಟ್ಟ ಬೆಳ್ಳಿಬಂಗಾರವನ್ನೂ ಎಲ್ಲ ಸಲಕರಣೆಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.</verse>
				<verse number="2">ಅನಂತರ ಸೊಲೊಮೋನನು ದಾವೀದ ನಗರವಾದ ಸಿಯೋನಿನಿಂದ ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ಮೇಲೆ ತರುವುದಕ್ಕಾಗಿ ಇಸ್ರಯೇಲರ ಹಿರಿಯರು, ಕುಲಾಧಿಪತಿಗಳು, ಇವರೇ ಮೊದಲಾದ ಎಲ್ಲಾ ಇಸ್ರಯೇಲ್ ಗಣ್ಯವ್ಯಕ್ತಿಗಳನ್ನು ಜೆರುಸಲೇಮಿಗೆ ಕರೆಸಿಕೊಂಡನು.</verse>
				<verse number="3">ಇಸ್ರಯೇಲ್ಯರೆಲ್ಲರೂ ಏಳನೆಯ ತಿಂಗಳಿನ ಜಾತ್ರೆಗಾಗಿ ಅರಸನ ಬಳಿಗೆ ಕೂಡಿಬಂದರು.</verse>
				<verse number="4">ಅವರ ಹಿರಿಯರೆಲ್ಲರೂ ಕೂಡಿಬಂದಿರಲಾಗಿ ಲೇವಿಯರು ಸರ್ವೇಶ್ವರನ ಮಂಜೂಷವನ್ನು ಹೊತ್ತುಕೊಂಡರು.</verse>
				<verse number="5">ಯಾಜಕರಾದ ಲೇವಿಯರು ದೇವದರ್ಶನದ ಗುಡಾರವನ್ನೂ ಅದರಲ್ಲಿದ್ದ ಎಲ್ಲ ಪರಿಶುದ್ಧ ಉಪಕರಣಗಳನ್ನೂ ಹೊತ್ತುಕೊಂಡುಹೋದರು.</verse>
				<verse number="6">ಅರಸ ಸೊಲೊಮೋನನೂ ಅಲ್ಲಿ ಕೂಡಿಬಂದಿದ್ದ ಎಲ್ಲ ಇಸ್ರಯೇಲರೂ ಮಂಜೂಷದ ಮುಂದೆ ಅಸಂಖ್ಯಾತ ಕುರಿದನಗಳನ್ನು ಬಲಿದಾನ ಮಾಡಿದರು.</verse>
				<verse number="7">ಯಾಜಕರು ಸರ್ವೇಶ್ವರನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳವಾದ ಗರ್ಭಗುಡಿಯಲ್ಲಿ, ಕೆರೂಬಿಗಳ ರೆಕ್ಕೆಗಳ ಕೆಳಗೆ, ಅದಕ್ಕೆಂದು ನೇಮಕವಾದ ಸ್ಥಳದಲ್ಲಿಟ್ಟರು.</verse>
				<verse number="8">ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದ್ದವು. ಆದುದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.</verse>
				<verse number="9">ಮಂಜೂಷಕ್ಕಿಂತಲೂ ಉದ್ದವಾಗಿದ್ದ ಆ ಕೋಲುಗಳ ತುದಿಗಳು ಗರ್ಭಗುಡಿಯ ಎದುರಿನಲ್ಲಿ ನಿಂತವರಿಗೆ ಕಾಣಿಸುತ್ತಿದ್ದವು. ಆದರೆ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ; ಮಂಜೂಷವು ಇಂದಿನವರೆಗೂ ಅಲ್ಲೇ ಇರುತ್ತದೆ.</verse>
				<verse number="10">ಅದರಲ್ಲಿ ಎರಡು ಕಲ್ಲಿನ ಹಲಗೆಗಳು ಹೊರತಾಗಿ ಬೇರೇನೂ ಇರಲಿಲ್ಲ. ಈಜಿಪ್ಟ್ ದೇಶದಿಂದ ಬಂದ ಇಸ್ರಯೇಲರೊಡನೆ, ಹೋರೇಬ್‍ಬೆಟ್ಟದ ಬಳಿ, ಸರ್ವೇಶ್ವರ ಒಡಂಬಡಿಕೆ ಮಾಡಿಕೊಂಡ ಮೇಲೆ, ಮೋಶೆ ಅವುಗಳನ್ನು ಅದರಲ್ಲಿಟ್ಟಿದ್ದನು.</verse>
				<verse number="11">ಕೂಡಿಬಂದಿದ್ದ ಯಾಜಕರು, ವರ್ಗವ್ಯತ್ಯಾಸವಿಲ್ಲದೆ ಎಲ್ಲರೂ ತಮ್ಮನ್ನು ಶುದ್ಧಪಡಿಸಿಕೊಂಡಿದ್ದರು.</verse>
				<verse number="12">ನಾರುಮಡಿಗಳನ್ನು ಧರಿಸಿಕೊಂಡು ತಾಳ, ಸ್ವರಮಂಡಲ, ಕಿನ್ನರಿ, ಇವುಗಳನ್ನು ಹಿಡಿದುಕೊಂಡು, ಲೇವಿಯ ಗಾಯಕರಾದ ಆಸಾಫ್, ಹೇಮಾನ್, ಯೆದುತೂನರು ಹಾಗೂ ಇವರ ಮಕ್ಕಳೂ ಸಹೋದರರೂ ತುತೂರಿಗಳನ್ನು ಊದತಕ್ಕ ನೂರಿಪ್ಪತ್ತು ಮಂದಿ ಯಾಜಕರೂ ಬಲಿಪೀಠದ ಪೂರ್ವದಿಕ್ಕಿನಲ್ಲಿ ನಿಂತುಕೊಂಡರು.</verse>
				<verse number="13">ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದ ಕೂಡಲೆ ಒಕ್ಕೊರಲಿನಿಂದ ಸ್ವರವೆತ್ತಿ ಸರ್ವೇಶ್ವರನನ್ನು ಕೀರ್ತಿಸುವುದಕ್ಕಾಗಿ, ತುತೂರಿ ಊದುವವರೂ ಗಾಯನಮಾಡುವವರೂ ಅಲ್ಲಿ ನಿಂತಿದ್ದರು. ತುತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿ ಹಾಗೂ ‘ಸರ್ವೇಶ್ವರ ಒಳ್ಳೆಯವರು, ಅವರ ಅಚಲ ಪ್ರೀತಿ ಶಾಶ್ವತವಾದುದು’ ಎಂದು ಕೃತಜ್ಞತಾಸ್ತುತಿ ಮಾಡುವವರ ಸ್ವರ ಕೇಳಿಸಿದೊಡನೆ ಮೇಘವೊಂದು ಸರ್ವೇಶ್ವರನ ಆಲಯದಲ್ಲಿ ತುಂಬಿಕೊಂಡಿತು.</verse>
				<verse number="14">ಸರ್ವೇಶ್ವರನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಆ ಮೇಘವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡಲಾರದೆ ಹೋದರು.</verse>
			</chapter>
			<chapter number="6">
				<verse number="1">ಆಗ ಸೊಲೊಮೋನನು ಹೀಗೆಂದು ಪ್ರಾರ್ಥಿಸಿದನು: “ಹೇ ಸರ್ವೇಶ್ವರಾ, ರವಿಯನ್ನು ಆಗಸದಲ್ಲಿ ಸ್ಥಿರವಾಗಿರಿಸಿದ ನೀವು ಆರಿಸಿಕೊಂಡಿರಿ ಕರಿಮೋಡದಲಿ ವಾಸಿಸಲು.</verse>
				<verse number="2">ನಾ ನಿರ್ಮಿಸಿರುವ ಈ ಭವ್ಯ ಮಂದಿರ ನಿಮಗಾಗಲಿ ಶಾಶ್ವತ ನಿವಾಸ.”</verse>
				<verse number="3">ಇದಾದ ಮೇಲೆ ಎದ್ದು ನಿಂತಿದ್ದ ಇಸ್ರಯೇಲ್ ಸಮಾಜದ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿದನು.</verse>
				<verse number="4">“ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ನನ್ನ ತಂದೆ ದಾವೀದನಿಗೆ ಅವರು ಬಾಯಿಂದ ನುಡಿದದ್ದನ್ನು ಈಗ ಕೈಯಿಂದ ನೆರವೇರಿಸಿದ್ದಾರೆ.</verse>
				<verse number="5">ಅವರು, ‘ನನ್ನ ಜನರಾದ ಇಸ್ರಯೇಲರನ್ನು ಈಜಿಪ್ಟಿನಿಂದ ಬರಮಾಡಿದಂದಿನಿಂದ ನನ್ನ ನಾಮದ ನಿವಾಸಕ್ಕಾಗಿ ಇಸ್ರಯೇಲ್ ಕುಲಗಳಲ್ಲಿ ಯಾವ ಪಟ್ಟಣವನ್ನೂ ಆಲಯಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆ ಇಸ್ರಯೇಲರನ್ನು ಆಳುವುದಕ್ಕೆ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.</verse>
				<verse number="6">ಆದರೆ ಈಗ ನನ್ನ ನಾಮಸ್ಥಾಪನೆಗಾಗಿ ಜೆರುಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಯೇಲರನ್ನು ಆಳುವುದಕ್ಕೆ ದಾವೀದನನ್ನೂ ಆರಿಸಿಕೊಂಡಿದ್ದೇನೆ’, ಎಂದು ಹೇಳಿದ್ದರು.</verse>
				<verse number="7">“ನನ್ನ ತಂದೆ ದಾವೀದನು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕೆಂದು ಮನಸ್ಸು ಮಾಡಿದಾಗ,</verse>
				<verse number="8">‘ನೀನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೆಯದೇ ಸರಿ.</verse>
				<verse number="9">ಆದರೂ ಅದನ್ನು ಕಟ್ಟಬೇಕಾದವನು ನೀನಲ್ಲ. ನಿನ್ನಿಂದ ಹುಟ್ಟುವ ಮಗನು ಅದನ್ನು ನನ್ನ ಹೆಸರಿಗಾಗಿ ಕಟ್ಟಬೇಕು,’ ಎಂದು ಹೇಳಿದ್ದರು.</verse>
				<verse number="10">ತಾವು ಕೊಟ್ಟ ಮಾತನ್ನು ಸರ್ವೇಶ್ವರ ನೆರವೇರಿಸಿದ್ದಾರೆ. ಅವರ ವಾಗ್ದಾನದಂತೆ ನಾನು ನನ್ನ ತಂದೆ ದಾವೀದನ ಸ್ಥಾನದಲ್ಲಿ ಕುಳಿತುಕೊಂಡಿದ್ದೇನೆ. ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದ್ದೇನೆ.</verse>
				<verse number="11">ಇದಲ್ಲದೆ ಇಸ್ರಯೇಲರಿಗೆ ಸರ್ವೇಶ್ವರನಿಂದ ದೊರಕಿದ ನಿಬಂಧನಶಾಸನಗಳಿರುವ ಮಂಜೂಷವನ್ನು ಅದರಲ್ಲಿಟ್ಟಿದ್ದೇನೆ,” ಎಂದು ಹೇಳಿದನು.</verse>
				<verse number="12">ಸೊಲೊಮೋನನು ಇಸ್ರಯೇಲರೆಲ್ಲರ ಎದುರಿನಲ್ಲಿ ಸರ್ವೇಶ್ವರನ ಬಲಿಪೀಠದ ಮುಂದೆ ಕೈಗಳನ್ನೆತ್ತಿಕೊಂಡು ಪ್ರಾರ್ಥನಾ ಭಂಗಿಯಲ್ಲಿ ನಿಂತನು.</verse>
				<verse number="13">ಅವನು 2:2 ಮೀಟರ್ ಉದ್ದ, 2:2 ಮೀಟರ್ ಅಗಲ, 1:3 ಮೀಟರ್ ಎತ್ತರವಾಗಿರುವ ಒಂದು ಕಂಚಿನ ಪೀಠವನ್ನು ಮಾಡಿಸಿ ಪ್ರಾಕಾರದ ಮಧ್ಯದಲ್ಲಿರಿಸಿದನು.ಇಸ್ರಯೇಲ್ ಸರ್ವಸಮೂಹದ ಎದುರಿನಲ್ಲಿ ಅದನ್ನು ಹತ್ತಿ ಅದರ ಮೇಲೆ ಮೊಣಕಾಲೂರಿಕೊಂಡು, ಆಕಾಶದ ಕಡೆಗೆ ಕೈಗಳನ್ನೆತ್ತಿ, ಹೀಗೆ ಪ್ರಾರ್ಥಿಸಿದನು:</verse>
				<verse number="14">“ಇಸ್ರಯೇಲ್ ದೇವರಾದ ಸರ್ವೇಶ್ವರಾ, ಭೂಲೋಕದಲ್ಲೂ ಪರಲೋಕದಲ್ಲೂ ನಿಮಗೆ ಸಮಾನರಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿಮಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಭಕ್ತರ ಬಗ್ಗೆ ನೀವು ನಿಮ್ಮ ಒಡಂಬಡಿಕೆಯನ್ನು ನೆರವೇರಿಸಿ ಕೃಪೆಯನ್ನು ತೋರಿಸುತ್ತೀರಿ.</verse>
				<verse number="15">ನಿಮ್ಮ ದಾಸನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ಈಡೇರಿಸಿದ್ದೀರಿ; ನಿಮ್ಮ ಬಾಯಿ ನುಡಿದದ್ದನ್ನು ನಿಮ್ಮ ಕೈ ಈಗ ನೆರವೇರಿಸಿತು.</verse>
				<verse number="16">ಇಸ್ರಯೇಲ್ ದೇವರಾದ ಸರ್ವೇಶ್ವರಾ, ನೀವು ನನ್ನ ತಂದೆ ದಾವೀದನಿಗೆ, ‘ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಕಟ್ಟಳೆಯನ್ನು ಅನುಸರಿಸಿ ನನ್ನ ಮಾರ್ಗದಲ್ಲಿ ನಡೆದುಕೊಂಡರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು’ ಎಂಬುದಾಗಿ ವಾಗ್ದಾನ ಮಾಡಿದ್ದೀರಿ; ಅದನ್ನು ನೆರವೇರಿಸಿರಿ.</verse>
				<verse number="17">ಇಸ್ರಯೇಲ್ ದೇವರೇ, ಸರ್ವೇಶ್ವರಾ, ನೀವು ನಿಮ್ಮ ದಾಸ ದಾವೀದನಿಗೆ ನುಡಿದದ್ದೆಲ್ಲವೂ ಸಾರ್ಥಕವಾಗಲಿ!</verse>
				<verse number="18">“ದೇವರು ನಿಜವಾಗಿ ಮಾನವರೊಡನೆ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿಮ್ಮ ವಾಸಕ್ಕೆ ಸಾಲವು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?</verse>
				<verse number="19">ಆದರೂ ನನ್ನ ದೇವರೇ, ಸರ್ವೇಶ್ವರಾ, ನಿಮ್ಮ ದಾಸನ ಪ್ರಾರ್ಥನೆಗೂ ವಿಜ್ಞಾಪನೆಗೂ ಕಿವಿಗೊಡಿ; ನಿಮ್ಮನ್ನು ಪ್ರಾರ್ಥಿಸುತ್ತಿರುವ ನಿಮ್ಮ ದಾಸನ ಮೊರೆಯನ್ನು ಆಲಿಸಿರಿ.</verse>
				<verse number="20">ಈ ಸ್ಥಳವನ್ನು ಕುರಿತು, ‘ನನ್ನ ನಾಮದ ಮಹಿಮೆ ಇಲ್ಲಿ ನೆಲೆಸುವುದು’ ಎಂದು ಹೇಳಿದ್ದೀರಿ, ನಿಮ್ಮ ಕೃಪಾಕಟಾಕ್ಷವು ಹಗಲಿರುಳೂ ಈ ಮಂದಿರದ ಮೇಲಿರಲಿ; ಇಲ್ಲಿ ನಿಮ್ಮ ದಾಸನು ಪ್ರಾರ್ಥಿಸುವಾಗಲೆಲ್ಲಾ ಅವನಿಗೆ ಸದುತ್ತರವನ್ನು ದಯಪಾಲಿಸಿರಿ.</verse>
				<verse number="21">ನಿಮ್ಮ ದಾಸನಾದ ನಾನಾಗಲಿ, ನಿಮ್ಮ ಪ್ರಜೆಗಳಾದ ಇಸ್ರಯೇಲರಾಗಲಿ, ಈ ಸ್ಥಳದ ಕಡೆಗೆ ತಿರುಗಿಕೊಂಡು ನಿಮ್ಮನ್ನು ಪ್ರಾರ್ಥಿಸುವಾಗ ನಿಮ್ಮ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹಗಳನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸಿರಿ.</verse>
				<verse number="22">“ನೆರೆಯವನಿಗೆ ವಿರುದ್ಧ ತಪ್ಪುಮಾಡಿದವನು ಎಂಬ ಸಂಶಯಕ್ಕೆ ಗುರಿಯಾದ ಒಬ್ಬ ವ್ಯಕ್ತಿ ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ, ಅವನು ಈ ಆಲಯಕ್ಕೆ ಬಂದು, ನಿಮ್ಮ ಪೀಠದ ಮುಂದೆ ನಿಂತು ಪ್ರಮಾಣಮಾಡಿದರೆ,</verse>
				<verse number="23">ನೀವು ಪರಲೋಕದಿಂದ ಅದನ್ನು ಕೇಳಿ ನಿಮ್ಮ ಭಕ್ತರ ವ್ಯಾಜ್ಯವನ್ನು ತೀರಿಸಿರಿ. ದುಷ್ಟನನ್ನು ಖಂಡಿಸಿ ಅವನ ತಪ್ಪನ್ನು ಅವನ ಮೇಲೆಯೇ ಹೊರಿಸಿರಿ; ಅವನು ಅಪರಾಧಿಯೆಂದು ತೋರಿಸಿಕೊಡಿ. ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ, ಅವನು ನೀತಿವಂತನೆಂದು ತೋರಿಸಿಕೊಡಿ.</verse>
				<verse number="24">“ತಮ್ಮ ಪಾಪಗಳ ನಿಮಿತ್ತ ಶತ್ರುಗಳ ಮುಂದೆ ತಲೆತಗ್ಗಿಸಬೇಕಾಗುವ ನಿಮ್ಮ ಪ್ರಜೆಗಳಾದ ಇಸ್ರಯೇಲರು ನಿಮ್ಮ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಎತ್ತಿ, ಈ ಆಲಯಕ್ಕೆ ಬಂದು, ನಿಮ್ಮ ಸನ್ನಿಧಿಯಲ್ಲಿ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡಿದರೆ,</verse>
				<verse number="25">ನೀವು ಪರಲೋಕದಿಂದ ಆಲಿಸಿ ಅವರ ಪಾಪಗಳನ್ನು ಕ್ಷಮಿಸಿ, ಅವರಿಗೂ ಅವರ ಪಿತೃಗಳಿಗೂ ನೀವು ಕೊಟ್ಟ ನಾಡಿಗೆ ಅವರನ್ನು ಮರಳಿ ಬರಮಾಡಿ.</verse>
				<verse number="26">“ಅವರ ಪಾಪಗಳ ನಿಮಿತ್ತ ನೀವು ಆಕಾಶವನ್ನು ಮಳೆಗರೆಯದಂತೆ ಮುಚ್ಚಿ, ಅವರನ್ನು ತಗ್ಗಿಸಿದಾಗ, ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವರು ನೀವೇ ಎಂದು ನಿಮ್ಮ ನಾಮವನ್ನು ಎತ್ತಿ, ಈ ಆಲಯದ ಕಡೆಗೆ ತಿರುಗಿಕೊಂಡು, ನಿಮ್ಮನ್ನು ಪ್ರಾರ್ಥಿಸಿದರೆ,</verse>
				<verse number="27">ಪರಲೋಕದಲ್ಲಿರುವ ನೀವು ಆಲಿಸಿ ನಿಮ್ಮ ಭಕ್ತರೂ ಪ್ರಜೆಗಳೂ ಆದ ಇಸ್ರಯೇಲರ ಪಾಪಗಳನ್ನು ಕ್ಷಮಿಸಿ, ಅವರು ನಡೆಯಬೇಕಾದ ಸನ್ಮಾರ್ಗವನ್ನು ತೋರಿಸಿ, ನಿಮ್ಮ ಪ್ರಜೆಗೆ ಸ್ವಂತ ಸೊತ್ತಾಗಿ ಕೊಟ್ಟ ಈ ನಾಡಿಗೆ ಮಳೆಯನ್ನು ಅನುಗ್ರಹಿಸಿರಿ.</verse>
				<verse number="28">“ನಾಡಿಗೆ ಕ್ಷಾಮ, ಘೋರವ್ಯಾಧಿ, ಬೆಳೆಗೆ ಬಿಸಿಗಾಳಿ, ಬೂದಿ, ಮಿಡತೆ, ಚಿಟ್ಟೆಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಇಂಥ ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ, ಬಾಧೆಯುಂಟಾದರೆ</verse>
				<verse number="29">ಎಲ್ಲಾ ಇಸ್ರಯೇಲರಾಗಲಿ, ಅವರಲ್ಲೊಬ್ಬನಾಗಲಿ, ತಾವು ಅನುಭವಿಸುತ್ತಿರುವ ಉಪದ್ರವ, ದುಃಖಗಳ ನಿಮಿತ್ತ ಈ ಆಲಯದ ಕಡೆಗೆ ಕೈಯೆತ್ತಿ ನಿಮಗೆ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡಿದರೆ,</verse>
				<verse number="30">ಮನುಷ್ಯರ ಹೃದಯಗಳನ್ನು ಬಲ್ಲಂಥ ನೀವು ನಿಮ್ಮ ನಿವಾಸವಾಗಿರುವ ಪರಲೋಕದಿಂದ ಆಲಿಸಿರಿ; ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸಿರಿ. ಮನುಷ್ಯರ ಅಂತರಂಗಗಳನ್ನು ಬಲ್ಲವರು ನೀವೊಬ್ಬರೇ. ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕಹಾಗೆ ಫಲವನ್ನು ಕೊಡಿ.</verse>
				<verse number="31">ಆಗ ನಮ್ಮ ಪಿತೃಗಳಿಗೆ ನೀವು ಕೊಟ್ಟ ಈ ನಾಡಿನಲ್ಲಿ ಅವರು ವಾಸಿಸುವ ಕಾಲವೆಲ್ಲಾ ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ನಿಮ್ಮ ಮಾರ್ಗದಲ್ಲೇ ನಡೆಯುವರು.</verse>
				<verse number="32">“ನಿಮ್ಮ ಪ್ರಜೆಗಳಾದ ಇಸ್ರಯೇಲರಿಗೆ ಸೇರದಂಥ ಒಬ್ಬ ಪರದೇಶಿಯು ನಿಮ್ಮ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ ಇವುಗಳ ಸಂದೇಶವನ್ನು ಕೇಳಿ ದೂರದೇಶದಿಂದ ಬಂದು, ಈ ಆಲಯದ ಮುಂದೆ ನಿಂತು, ನಿಮ್ಮನ್ನು ಪ್ರಾರ್ಥಿಸಿದರೆ ನಿಮ್ಮ ನಿವಾಸವಾಗಿರುವ</verse>
				<verse number="33">ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿರಿ. ಆಗ ಲೋಕದ ಎಲ್ಲ ಜನರೂ ನಿಮ್ಮ ನಾಮಮಹತ್ತನ್ನು ತಿಳಿದು, ನಿಮ್ಮ ಜನರಾದ ಇಸ್ರಯೇಲರಂತೆ, ನಿಮ್ಮಲ್ಲಿ ಭಯಭಕ್ತಿಯುಳ್ಳವರಾಗಿ ನಾನು ನಿಮ್ಮ ಹೆಸರಿಗಾಗಿ ಈ ಆಲಯವನ್ನು ಕಟ್ಟಿಸಿದ್ದೇನೆಂದು ತಿಳಿದುಕೊಳ್ಳುವರು.</verse>
				<verse number="34">“ನೀವು ನಿಮ್ಮ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೆ ಎಲ್ಲಿಗಾದರೂ ಕಳುಹಿಸಿದಾಗ ಅವರು ಅಲ್ಲಿಂದ ನೀವು ಆರಿಸಿಕೊಂಡ ಪಟ್ಟಣದ ಕಡೆಗೂ ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಆ ಆಲಯದ ಕಡೆಗೂ ತಿರುಗಿಕೊಂಡು ನಿಮ್ಮನ್ನು ಪ್ರಾರ್ಥಿಸಿದರೆ,</verse>
				<verse number="35">ನೀವು ಪರಲೋಕದಿಂದ ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಕೇಳಿ ಅವರಿಗೆ ಜಯವನ್ನು ನೀಡಿರಿ.</verse>
				<verse number="36">“ಅವರು ನಿಮಗೆ ವಿರುದ್ಧ ಪಾಪಮಾಡಬಹುದು. ಪಾಪಮಾಡದ ವ್ಯಕ್ತಿ ಒಬ್ಬನೂ ಇಲ್ಲ. ನೀವು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ ಇರುವ ದೇಶಕ್ಕೆ ಒಯ್ದಾಗ,</verse>
				<verse number="37">ಅವರು ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಪಶ್ಚಾತ್ತಾಪಪಟ್ಟು, ನಿಮ್ಮ ಅನುಗ್ರಹದಿಂದ</verse>
				<verse number="38">ತಮ್ಮ ಪಿತೃಗಳಿಗೆ ದೊರಕಿದ ನಾಡಿನ ಕಡೆಗೆ, ನೀವು ಆರಿಸಿಕೊಂಡ ಪಟ್ಟಣದ ಕಡೆಗೆ, ನಾನು ನಿಮ್ಮ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೆ ತಿರುಗಿಕೊಂಡು, ‘ನಾವು ನಿಮ್ಮ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು’ ಎಂದು ಒಪ್ಪಿಕೊಂಡು ಪೂರ್ಣಮನಸ್ಸಿನಿಂದ ಹಾಗೂ ಪೂರ್ಣಪ್ರಾಣದಿಂದ ನಿಮ್ಮನ್ನು ಪ್ರಾರ್ಥಿಸಿದರೆ,</verse>
				<verse number="39">ನೀವು ನಿಮ್ಮ ನಿವಾಸವಾಗಿರುವ ಪರಲೋಕದಿಂದ ಅವರ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಆಲಿಸಿ, ಅವರಿಗೆ ದಯೆ ತೋರಿಸಿ, ನಿಮಗೆ ವಿರುದ್ಧ ಪಾಪಮಾಡಿದ ನಿಮ್ಮ ಪ್ರಜೆಗೆ ಕ್ಷಮೆಯನ್ನು ಅನುಗ್ರಹಿಸಿರಿ.</verse>
				<verse number="40">“ನನ್ನ ದೇವರೇ, ಕಟಾಕ್ಷವಿಡಿ, ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಗೆ ಕಿವಿಗೊಡಿ.</verse>
				<verse number="41">ದೇವರಾದ ಸರ್ವೇಶ್ವರಾ, ಎದ್ದು ಬನ್ನಿ, ನಿಮ್ಮ ತೇಜೋಮಯ ಮಂಜೂಷದೊಡನೆ ನಿಮ್ಮ ವಾಸಸ್ಥಾನದೊಳಗೆ ಸೇರಿಕೊಳ್ಳಿ. ದೇವರಾದ ಸರ್ವೇಶ್ವರಾ, ನಿಮ್ಮ ಯಾಜಕರು ರಕ್ಷಣೆಯೆಂಬ ಕವಚವನ್ನು ಹೊದ್ದುಕೊಳ್ಳಲಿ, ನಿಮ್ಮ ಭಕ್ತರು ಸೌಭಾಗ್ಯದಲ್ಲಿ ಹರ್ಷಿಸಲಿ.</verse>
				<verse number="42">ದೇವರಾದ ಸರ್ವೇಶ್ವರಾ, ನಿಮ್ಮಿಂದ ಅಭಿಷೇಕ ಆದವನನ್ನು ತಳ್ಳಿಬಿಡಬೇಡಿ. ನಿಮ್ಮ ದಾಸ ದಾವೀದನಿಗೆ ಅನುಗ್ರಹಿಸಿದ ಕೃಪೆಯನ್ನು ನೆನಪುಮಾಡಿಕೊಳ್ಳಿ.”</verse>
			</chapter>
			<chapter number="7">
				<verse number="1">ಸೊಲೊಮೋನನು ತನ್ನ ಪ್ರಾರ್ಥನೆಯನ್ನು ಮುಗಿಸಿದ ಕೂಡಲೆ ಆಕಾಶದಿಂದ ಬೆಂಕಿ ಇಳಿದು ಬಂದು ದಹನಬಲಿದ್ರವ್ಯಗಳನ್ನೂ ಬಲಿಮಾಂಸವನ್ನೂ ದಹಿಸಿಬಿಟ್ಟಿತು; ಸರ್ವೇಶ್ವರನ ತೇಜಸ್ಸು ಆಲಯದಲ್ಲಿ ತುಂಬಿಕೊಂಡಿತು.</verse>
				<verse number="2">ಸರ್ವೇಶ್ವರನ ಆ ತೇಜಸ್ಸು ಆಲಯದಲ್ಲಿ ತುಂಬಿಕೊಂಡಿದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು.</verse>
				<verse number="3">ಇಸ್ರಯೇಲರೆಲ್ಲರು ಬೆಂಕಿ ಇಳಿದು ಬರುವುದನ್ನೂ ಸರ್ವೇಶ್ವರನ ತೇಜಸ್ಸು ಆಲಯದಲ್ಲಿರುವುದನ್ನೂ ನೋಡಿ ನೆಲಗಟ್ಟಿನ ಮೇಲೆ ಸಾಷ್ಟಾಂಗವೆರಗಿ ಆರಾಧಿಸಿದರು; “ಸರ್ವೇಶ್ವರ ಒಳ್ಳೆಯವರು; ಅವರ ಅಚಲ ಪ್ರೀತಿ ಶಾಶ್ವತ” ಎಂದು ಕೃತಜ್ಞತಾಸ್ತುತಿ ಮಾಡಿದರು.</verse>
				<verse number="4">ಅರಸನೂ ಜನರೆಲ್ಲರೂ ಸರ್ವೇಶ್ವರನ ಸನ್ನಿಧಿಯಲ್ಲಿ ಬಲಿದಾನಮಾಡಿದರು.</verse>
				<verse number="5">ಅರಸ ಸೊಲೊಮೋನನು ಬಲಿಯಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ, ಕುರಿಗಳು ಲಕ್ಷದ ಇಪ್ಪತ್ತು ಸಾವಿರ. ಈ ಪ್ರಕಾರ ಅರಸನೂ ಇಸ್ರಯೇಲರೆಲ್ಲರೂ ದೇವಾಲಯವನ್ನು ಪ್ರತಿಷ್ಠಿಸಿದರು.</verse>
				<verse number="6">ಯಾಜಕರೂ ಲೇವಿಯರೂ ತಮ್ಮ ತಮ್ಮ ಸ್ಥಳಗಳಲ್ಲಿ ನಿಂತರು. ದಾವೀದನು ಸರ್ವೇಶ್ವರನ ಗಾಯನಸೇವೆಗಾಗಿ ಮಾಡಿಸಿದ ವಾದ್ಯಗಳು ಈ ಲೇವಿಯರ ಕೈಯಲ್ಲಿ ಇದ್ದವು. ಇವರು ರಾಜಸೇವೆಯಲ್ಲಿದ್ದುಕೊಂಡು ದೇವಾರಾಧನೆ ನಡೆಸುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಯನ್ನು ಸಮರ್ಪಿಸಿರಿ; ಅವರ ಅಚಲಪ್ರೀತಿ ಶಾಶ್ವತ” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಇವರ ಎದುರಾಗಿ ನಿಂತು ತುತೂರಿಯೂದುತ್ತಿದ್ದರು. ಇಸ್ರಯೇಲರೆಲ್ಲರೂ ನಿಂತಿದ್ದರು.</verse>
				<verse number="7">ಸೊಲೊಮೋನನು ಮಾಡಿಸಿದ್ದ ಕಂಚಿನ ಬಲಿಪೀಠವು, ಸಮರ್ಪಣೆಯಾದ ದಹನಬಲಿದ್ರವ್ಯಗಳನ್ನೂ ಧಾನ್ಯನೈವೇದ್ಯಗಳನ್ನೂ ಶಾಂತಿಸಮಾಧಾನಬಲಿಯ ಕೊಬ್ಬನ್ನೂ ಹಿಡಿಯಲಾಗಲಿಲ್ಲ. ಆದ್ದರಿಂದ ಅವನು ಸರ್ವೇಶ್ವರನ ಆಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ, ಅಲ್ಲಿ ಇವುಗಳನ್ನೆಲ್ಲಾ ಸಮರ್ಪಿಸಿದನು.</verse>
				<verse number="8">ಈ ಪ್ರಕಾರ ಸೊಲೊಮೋನನು ಮತ್ತು ಹಮಾತಿನ ದಾರಿಯಿಂದ ಈಜಿಪ್ಟಿನ ಹಳ್ಳದವರೆಗಿರುವ ಪ್ರಾಂತ್ಯಗಳಿಂದ ಮಹಾಸಮೂಹವಾಗಿ ಕೂಡಿಬಂದಿದ್ದ ಇಸ್ರಯೇಲರೆಲ್ಲರು ಅದೇ ಸಮಯದಲ್ಲಿ ಏಳು ದಿನಗಳವರೆಗೂ ಜಾತ್ರೆ ನಡೆಸಿದರು.</verse>
				<verse number="9">ತರುವಾಯ ಎಂಟನೆಯ ದಿನದಲ್ಲಿ ಸಭೆಸೇರಿದರು. ಹೀಗೆ ಏಳು ದಿವಸ ಬಲಿಪೀಠ ಪ್ರತಿಷ್ಠೆಯನ್ನೂ ಇನ್ನು ಏಳು ದಿವಸ ಜಾತ್ರೆಯನ್ನೂ ನಡೆಸಿದರು.</verse>
				<verse number="10">ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನ ಅರಸನು ಜನರಿಗೆ ಅಪ್ಪಣೆಕೊಟ್ಟನು; ಅವರು ದಾವೀದ - ಸೊಲೊಮೋನರಿಗೂ ಪ್ರಜೆಗಳಾದ ಇಸ್ರಯೇಲರಿಗೂ ಸರ್ವೇಶ್ವರ ಮಾಡಿದ ಉಪಕಾರಗಳನ್ನು ನೆನಸಿಕೊಂಡು, ಆನಂದಭರಿತರಾಗಿ ಹರ್ಷಿಸುತ್ತಾ, ತಮ್ಮ ತಮ್ಮ ನಿವಾಸಗಳಿಗೆ ಹಿಂದಿರುಗಿದರು.</verse>
				<verse number="11">ಸೊಲೊಮೋನನು ಸರ್ವೇಶ್ವರನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿ, ಆ ಕಟ್ಟಡಗಳ ವಿಷಯವಾಗಿ ತನ್ನ ಮನಸ್ಸಿನಲ್ಲಿ ಇದ್ದ ಯೋಜನೆಯನ್ನು ಈಡೇರಿಸಿದನು.</verse>
				<verse number="12">ಬಳಿಕ ಸರ್ವೇಶ್ವರ ಅವನಿಗೆ ರಾತ್ರಿಯಲ್ಲಿ ಪ್ರತ್ಯಕ್ಷರಾಗಿ, “ನೀನು ನನಗೆ ಮಾಡಿದ ಪ್ರಾರ್ಥನೆಯನ್ನು ಆಲಿಸಿ, ಈ ಮನೆಯನ್ನು ಬಲಿಯರ್ಪಣಾ ಮಂದಿರಕ್ಕಾಗಿ ಆರಿಸಿಕೊಂಡಿದ್ದೇನೆ.</verse>
				<verse number="13">ನಾನು ಆಕಾಶವನ್ನು ಮಳೆಗರೆಯದಂತೆ ಮುಚ್ಚುವಾಗಲು, ನಾಡನ್ನು ನಾಶಮಾಡುವುದಕ್ಕೆ ಮಿಡತೆಗಳನ್ನು ಕಳುಹಿಸುವಾಗಲು ಹಾಗೂ ನನ್ನ ಪ್ರಜೆಯ ಮೇಲೆ ಘೋರವ್ಯಾಧಿಯನ್ನು ಬರಮಾಡುವಾಗಲು</verse>
				<verse number="14">ನನ್ನವರೆಂದು ಹೆಸರುಗೊಂಡ ನನ್ನ ಪ್ರಜೆಗಳು ತಮ್ಮನ್ನೇ ತಗ್ಗಿಸಿಕೊಂಡು, ನನ್ನ‍ನ್ನು ಪ್ರಾರ್ಥಿಸಿ, ನನ್ನ ದರ್ಶನವನ್ನು ಬಯಸುವುದಾದರೆ ನಾನು ಪರಲೋಕದಿಂದ ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ನಾಡಿಗೆ ಆರೋಗ್ಯಭಾಗ್ಯವನ್ನು ದಯಪಾಲಿಸುವೆನು.</verse>
				<verse number="15">ಇನ್ನು ಮುಂದೆ ಈ ಸ್ಥಳದಲ್ಲಿ ಪ್ರಾರ್ಥಿಸುವವರನ್ನು ಕಟಾಕ್ಷಿಸಿ ಅವರ ವಿಜ್ಞಾಪನೆಗೆ ಕಿವಿಗೊಡುವೆನು.</verse>
				<verse number="16">ನನ್ನ ನಾಮ ಮಹಿಮೆ ಈ ಆಲಯದಲ್ಲಿ ಶಾಶ್ವತವಾಗಿರುವಂತೆ ಇದನ್ನು ನನಗಾಗಿ ಆರಿಸಿ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ ಮನಸ್ಸೂ ಸದಾ ಅಲ್ಲಿ ಇರುವುವು.</verse>
				<verse number="17">ನೀನು ನಿನ್ನ ತಂದೆಯಾದ ದಾವೀದನಂತೆ ನನ್ನ ಆಜ್ಞಾವಿಧಿಗಳನ್ನು ಕೈಗೊಂಡು ನನಗೆ ವಿಧೇಯನಾಗಿ ನಡೆದುಕೊಂಡರೆ</verse>
				<verse number="18">ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ‘ಇಸ್ರಯೇಲರಲ್ಲಿ ನಿನ್ನ ಸಂತಾನದವರು ತಪ್ಪದೆ ರಾಜ್ಯಾಧಿಕಾರ ನಡೆಸುವರು’ ಎಂಬುದಾಗಿ ನಿನ್ನ ತಂದೆ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.</verse>
				<verse number="19">ಆದರೆ ನೀವು ದ್ರೋಹಿಗಳಾಗಿ, ನನ್ನ ಆಜ್ಞಾವಿಧಿಗಳನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈ ಮುಗಿಯುವುದಾದರೆ,</verse>
				<verse number="20">ನಾನು ಇಸ್ರಯೇಲರಿಗೆ ಕೊಟ್ಟ ನನ್ನ ನಾಡಿನಿಂದ ನಿಮ್ಮನ್ನು ಕಿತ್ತುಹಾಕುವೆನು; ನನ್ನ ಹೆಸರಿಗೆ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಿರಾಕರಿಸಿಬಿಡುವೆನು; ಎಲ್ಲ ಜನಾಂಗಗಳವರು ಪರಿಹಾಸ್ಯದಿಂದ ಲಾವಣಿ ಕಟ್ಟುವುದಕ್ಕೂ ನಿಂದಿಸುವುದಕ್ಕೂ ಇದು ಆಸ್ಪದವಾಗುವಂತೆ ಮಾಡುವೆನು.</verse>
				<verse number="21">ಉನ್ನತವಾದ ಈ ಮಂದಿರದ ಮಾರ್ಗವಾಗಿ ಹೋಗುವವರು ಇದನ್ನು ನೋಡಿ ವಿಸ್ಮಿತರಾಗಿ, ‘ಸರ್ವೇಶ್ವರ ಈ ನಾಡನ್ನೂ ಈ ಆಲಯವನ್ನೂ ಹೀಗೇಕೆ ಮಾಡಿಬಿಟ್ಟರು?’ ಎಂದು ಕೇಳುವರು.</verse>
				<verse number="22">ಆಗ ಅವರಿಗೆ, ‘ಈ ನಾಡಿನವರು ತಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿದ ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಟ್ಟು, ಅನ್ಯದೇವತೆಗಳನ್ನು ಅವಲಂಭಿಸಿ, ಅವುಗಳಿಗೆ ಅಡ್ಡಬಿದ್ದು ಸೇವೆಸಲ್ಲಿಸಿದ್ದರಿಂದಲೇ ಅವರು ಈ ಎಲ್ಲಾ ಆಪತ್ತುಗಳನ್ನು ಅವರಿಗೆ ಬರಮಾಡಿ ಇದ್ದಾರೆ,’ ಎಂಬ ಉತ್ತರ ಸಿಕ್ಕುವುದು,” ಎಂದರು.</verse>
			</chapter>
			<chapter number="8">
				<verse number="1">ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಸರ್ವೇಶ್ವರನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು.</verse>
				<verse number="2">ಹೂರಾಮನಿಂದ ತನಗೆ ದೊರಕಿದ ಪಟ್ಟಣಗಳನ್ನು ಭದ್ರಪಡಿಸಿ ಅವುಗಳಲ್ಲಿ ಇಸ್ರಯೇಲರು ನೆಲಸುವಂತೆ ಮಾಡಿದನು.</verse>
				<verse number="3">ಅನಂತರ ಅವನು ಚೋಬರಾಜ್ಯದ ಹಮಾತಿಗೆ ಹೋಗಿ ಅದನ್ನು ಸ್ವಾಧೀನ ಮಾಡಿಕೊಂಡನು.</verse>
				<verse number="4">ಮರುಭೂಮಿಯಲ್ಲಿದ್ದ ತದ್ಮೋರ್ ಪಟ್ಟಣವನ್ನೂ ಹಮಾತಿನಲ್ಲಿ ತಾನು ಕಟ್ಟಿಸಿದ ಎಲ್ಲಾ ಉಗ್ರಾಣದ ಪಟ್ಟಣಗಳನ್ನೂ ಸುಭದ್ರಪಡಿಸಿದನು.</verse>
				<verse number="5">ಮೇಲಿನ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ಊರುಗಳಿಗೆ ಪೌಳಿಗೋಡೆ, ಕದ, ಅಗುಳಿ ಇವುಗಳನ್ನು ಏರ್ಪಡಿಸಿ ಕೋಟೆಗಳನ್ನಾಗಿ ಮಾರ್ಪಡಿಸಿದನು.</verse>
				<verse number="6">ಬಾಲಾ ತೂರು, ತನ್ನ ಎಲ್ಲ ಉಗ್ರಾಣದ ಪಟ್ಟಣಗಳು, ಯುದ್ಧರಥಗಳನ್ನಿರಿಸುವ ಪಟ್ಟಣ, ರಾಹುತರ ಪಟ್ಟಣ ಇವುಗಳನ್ನೂ ಕಟ್ಟಿಸಿದನು. ಜೆರುಸಲೇಮಿನಲ್ಲೂ ಲೆಬನೋನಿನಲ್ಲೂ ತನ್ನ ರಾಜ್ಯದ ಎಲ್ಲಾ ಪ್ರಾಂತಗಳಲ್ಲೂ ತನಗೆ ಇಷ್ಟವಾದುವುಗಳನ್ನೆಲ್ಲಾ ಕಟ್ಟಿಸಿದನು.</verse>
				<verse number="7">ಇಸ್ರಯೇಲರಿಂದ ಸಂಹೃತರಾಗದೆ ಕಾನಾನ್ ನಾಡಿನಲ್ಲಿ ಅಳಿದುಳಿದ ಹಿತ್ತಿಯ, ಅಮೋರಿಯ, ಪೆರಿಜೀಯ, ಹಿವ್ವಿಯ ಹಾಗೂ ಯೆಬೂಸಿಯ ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನೂ ಬಿಟ್ಟಿಹಿಡಿದನು.</verse>
				<verse number="8">ಅವರು ಇಂದಿನವರೆಗೂ ಬಿಟ್ಟೀಕೆಲಸದವರಾಗಿರುತ್ತಾರೆ.</verse>
				<verse number="9">ಆದರೆ ಸೊಲೊಮೋನನು ತನ್ನ ಕೆಲಸಕ್ಕಾಗಿ ಇಸ್ರಯೇಲರನ್ನು ಬಿಟ್ಟಿಹಿಡಿಯಲಿಲ್ಲ. ಅವರನ್ನು ಸೈನಿಕರನ್ನಾಗಿ, ಅಧಿಪತಿಗಳನ್ನಾಗಿ, ಸರದಾರರನ್ನಾಗಿ ಹಾಗೂ ರಥಾಶ್ವಬಲಗಳ ನಾಯಕರನ್ನಾಗಿ ನೇಮಿಸಿಕೊಂಡನು.</verse>
				<verse number="10">ಇಂಥ ಇನ್ನೂರೈವತ್ತು ಮಂದಿ ಮುಖ್ಯಾಧಿಪತಿಗಳು ಅರಸ ಸೊಲೊಮೋನನ ಆಳುಗಳ ಮೇಲೆ ಅಧಿಕಾರಿಗಳಾಗಿದ್ದರು.</verse>
				<verse number="11">“ಯಾವ ಯಾವ ಸ್ಥಳಗಳಲ್ಲಿ ಸರ್ವೇಶ್ವರನ ಮಂಜೂಷವಿತ್ತೋ ಅವು ಪವಿತ್ರಸ್ಥಾನಗಳು; ಆದುದರಿಂದ ಇಸ್ರಯೇಲರ ಅರಸನಾಗಿದ್ದ ದಾವೀದನ ಮನೆ ಪವಿತ್ರವಾದುದು; ಅಲ್ಲಿ ಫರೋಹನ ಮಗಳಾದ ನನ್ನ ಹೆಂಡತಿ ವಾಸಿಸಬಾರದು,” ಎಂದುಕೊಂಡು ಸೊಲೊಮೋನನು ಆಕೆಯನ್ನು ದಾವೀದನಗರದಿಂದಾಚೆ ಆಕೆಗಾಗಿಯೇ ತಾನು ಕಟ್ಟಿಸಿದ್ದ ಮಂದಿರದಲ್ಲಿ ಇರಿಸಿದನು.</verse>
				<verse number="12">ಆ ಕಾಲದಲ್ಲಿ ಸೊಲೊಮೋನನು ತಾನು ಸರ್ವೇಶ್ವರನಿಗಾಗಿ ಮಂಟಪದ ಮುಂದೆ ಕಟ್ಟಿಸಿದ ಸರ್ವೇಶ್ವರನ ಬಲಿಪೀಠದ ಮೇಲೆ,</verse>
				<verse number="13">ಮೋಶೆಯ ಆಜ್ಞೆಯಂತೆ, ಸಬ್ಬತ್‍ದಿನ, ಅಮಾವಾಸ್ಯೆ, ಇವುಗಳಲ್ಲೂ ಹುಳಿರಹಿತ ರೊಟ್ಟಿಗಳ ಜಾತ್ರೆ, ಪಂಚಾಶತ್ತಮ ದಿನದ ಜಾತ್ರೆ, ಪರ್ಣಕುಟೀರಗಳ ಜಾತ್ರೆ ಎಂಬೀ ಮೂರು ವಾರ್ಷಿಕ ಜಾತ್ರೆಗಳಲ್ಲೂ ಆಯಾ ದಿವಸಗಳಿಗೆ ನೇಮಕವಾದ ದಹನಬಲಿಗಳನ್ನು ಸಮರ್ಪಿಸುತ್ತಿದ್ದನು.</verse>
				<verse number="14">ಇದಲ್ಲದೆ, ತನ್ನ ತಂದೆ ದಾವೀದನ ವಿಧಿಗೆ ಅನುಸಾರವಾಗಿ ಯಾಜಕ ವರ್ಗಗಳವರನ್ನೂ ಲೇವಿಯರನ್ನೂ ಅವರವರ ಸೇವಾವೃತ್ತಿಗೆ ನೇಮಿಸಿದನು. ಲೇವಿಯರು ಆಯಾ ದಿನದ ನೇಮದ ಪ್ರಕಾರ ದೇವಭಜನೆಮಾಡಿ ಯಾಜಕರ ಕೈಕೆಳಗೆ ಸೇವೆಮಾಡಬೇಕಾಗಿತ್ತು. ದ್ವಾರಪಾಲಕರು ತಮ್ಮ ತಮ್ಮ ವರ್ಗಗಳ ಸರದಿಯ ಮೇಲೆ ಆಯಾ ಬಾಗಿಲುಗಳನ್ನು ಕಾಯಬೇಕಾಗಿತ್ತು. ಇದು ದೈವಪುರುಷ ದಾವೀದರಾಜನ ಅಪ್ಪಣೆ ಆಗಿತ್ತು.</verse>
				<verse number="15">ಅವನು ಯಾಜಕರನ್ನೂ ಲೇವಿಯರನ್ನೂ ಅರಮನೆಯ ಭಂಡಾರಗಳನ್ನೂ ಕುರಿತು ಕೊಟ್ಟ ಅಪ್ಪಣೆಯನ್ನು ಅವರು ಕಿಂಚಿತ್ತಾದರೂ ಮೀರಲಿಲ್ಲ.</verse>
				<verse number="16">ಈ ಪ್ರಕಾರ ಅಸ್ತಿವಾರ ಮೊದಲುಗೊಂಡು ಸಮಾಪ್ತಿಯವರೆಗೂ ಸೊಲೊಮೋನನ ಎಲ್ಲಾ ಕೆಲಸವೂ ಮುಗಿದು ಸರ್ವೇಶ್ವರನ ಆಲಯ ಸಿದ್ಧವಾಯಿತು.</verse>
				<verse number="17">ಆಮೇಲೆ, ಸೊಲೊಮೋನನು ಎದೋಮ್ ದೇಶದ ಸಮುದ್ರತೀರದಲ್ಲಿರುವ ಎಚ್ಯೋನ್ಗೆಬೆರ್ ಹಾಗೂ ಏಲೋತ್ ಎಂಬ ಊರುಗಳಿಗೆ ಹೋದನು.</verse>
				<verse number="18">ಹೂರಾಮನು ಅವನಿಗೆ ತನ್ನ ಆಳುಗಳ ಮುಖಾಂತರ ಹಡಗುಗಳನ್ನು ಕಳುಹಿಸಿದ್ದಲ್ಲದೆ, ಸಮುದ್ರ ಪ್ರಯಾಣದಲ್ಲಿ ನಿಪುಣರಾದ ನಾವಿಕರನ್ನೂ ಕಳುಹಿಸಿದನು. ಅವರು ಸೊಲೊಮೋನನ ಸೇವಕರೊಡನೆ ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸ ಸೊಲೊಮೋನನಿಗೆ 15,000 ಕಿಲೋಗ್ರಾಂಗಿಂತ ಹೆಚ್ಚು ಬಂಗಾರವನ್ನೂ ತಂದುಕೊಟ್ಟರು.</verse>
			</chapter>
			<chapter number="9">
				<verse number="1">ಶೆಬಾದ ರಾಣಿ ಸೊಲೊಮೋನನ ಕೀರ್ತಿಯನ್ನು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕೆ ಜೆರುಸಲೇಮಿಗೆ ಬಂದಳು. ಆಕೆ ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು ಮಹಾಪರಿವಾರದೊಡನೆ ಸೊಲೊಮೋನನ ಬಳಿಗೆ ಬಂದಳು. ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಅವನೊಡನೆ ಸಂಭಾಷಿಸಿದಳು.</verse>
				<verse number="2">ಸೊಲೊಮೋನನು ಆಕೆಯ ಪ್ರಶ್ನೆಗಳಿಗೆಲ್ಲಾ ಉತ್ತರಕೊಟ್ಟನು. ಅವುಗಳಲ್ಲಿ ಬಗೆಹರಿಸಲು ಅವನಿಗೆ ಅಸಾಧ್ಯವಾದದ್ದು ಒಂದೂ ಇರಲಿಲ್ಲ; ಎಲ್ಲವುಗಳಿಗೂ ಉತ್ತರಕೊಟ್ಟನು.</verse>
				<verse number="3">ಆ ಶೆಬಾದ ರಾಣಿ ಸೊಲೊಮೋನನ ಜ್ಞಾನ, ಅವನು ಕಟ್ಟಿಸಿದ ಅರಮನೆ,</verse>
				<verse number="4">ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿದ್ದ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ ಮತ್ತು ಅವರ ಉಡುಪುಗಳು, ಅವನ ಪಾನಸೇವಕರು, ಅವರ ಉಡುಪುಗಳು ಇವುಗಳನ್ನೆಲ್ಲಾ ನೋಡಿದಳು. ಅಂತೆಯೇ ಅವನು ಸರ್ವೇಶ್ವರನ ಆಲಯದಲ್ಲಿ ಸಮರ್ಪಿಸುತ್ತಿದ್ದ ದಹನ ಬಲಿಗಳನ್ನೂ ಗಮನಿಸಿದಳು.</verse>
				<verse number="5">ಇವುಗಳಿಂದ ಆಶ್ಚರ್ಯಚಕಿತಳಾಗಿ, ಅವನಿಗೆ, “ನಾನು ನನ್ನ ದೇಶದಲ್ಲಿ ನಿಮ್ಮ ಜ್ಞಾನವನ್ನೂ ಸಾಧನೆಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.</verse>
				<verse number="6">ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ, ನಿಮ್ಮ ಜ್ಞಾನಾತಿಶಯವು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿದೆ; ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.</verse>
				<verse number="7">ನಿಮ್ಮ ಪ್ರಜೆಗಳು ಹಾಗೂ ಸದಾ ನಿಮ್ಮ ಸನ್ನಿಧಿಯಲ್ಲಿ ಇದ್ದುಕೊಂಡು ನಿಮ್ಮ ಜ್ಞಾನವಾಕ್ಯಗಳನ್ನು ಕೇಳುವ ಸೇವಕರು ಧನ್ಯರು!</verse>
				<verse number="8">ನಿಮ್ಮನ್ನು ಮೆಚ್ಚಿ, ತಮ್ಮ ಸಮ್ಮುಖದಲ್ಲಿ ಅರಸನಾಗಿಸಲು, ತಮ್ಮ ಸಿಂಹಾಸನದ ಮೇಲೆ ನಿಮ್ಮನ್ನು ಕುಳ್ಳಿರಿಸಿದ ಆ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ನಿಮ್ಮ ದೇವರು ಇಸ್ರಯೇಲರನ್ನು ಪ್ರೀತಿಸಿ ಅವರನ್ನು ನಿರಂತರವಾಗಿ ಸ್ಥಿರಗೊಳಿಸಬೇಕೆಂದಿದ್ದಾರೆ. ಆದ್ದರಿಂದಲೇ ಈ ಜನರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕಾಗಿ ನಿಮ್ಮನ್ನೇ ಅರಸನನ್ನಾಗಿ ನೇಮಿಸಿದ್ದಾರೆ,” ಎಂದು ಹೇಳಿದಳು.</verse>
				<verse number="9">ಆಕೆ ಅರಸನಿಗೆ 4000 ಕಿಲೋಗ್ರಾಂಗೂ ಹೆಚ್ಚು ಬಂಗಾರವನ್ನೂ ಅಪರಿಮಿತ ಸುಗಂಧದ್ರವ್ಯವನ್ನೂ ರತ್ನಗಳನ್ನೂ ಕೊಟ್ಟಳು. ಶೆಬಾದ ರಾಣಿ ಅರಸ ಸೊಲೊಮೋನನಿಗೆ ಕೊಟ್ಟ ಸುಗಂಧದ್ರವ್ಯಕ್ಕೆ ಸರಿಸಮಾನವಾದದ್ದು ಯಾವುದೂ ಇರಲಿಲ್ಲ.</verse>
				<verse number="10">ಹೂರಾಮನ ಮತ್ತು ಸೊಲೊಮೋನನ ಆಳುಗಳು ಓಫೀರ್‍ದೇಶದ ಬಂಗಾರವನ್ನಲ್ಲದೆ ಸುಗಂಧದ ಮರವನ್ನೂ ರತ್ನಗಳನ್ನೂ ತಂದರು.</verse>
				<verse number="11">ಅರಸನು ಸುಗಂಧದ ಮರದಿಂದ ದೇವಾಲಯ ಹಾಗೂ ಅರಮನೆಗಳಿಗೆ ಸೋಪಾನಗಳನ್ನೂ ಗಾಯಕರಿಗಾಗಿ ಕಿನ್ನರಿಗಳನ್ನೂ ಸ್ವರಮಂಡಲಗಳನ್ನೂ ಮಾಡಿಸಿದನು. ಇಂಥ ಸುಗಂಧದ ಮರವನ್ನು ಹಿಂದೆಂದೂ ಜುದೇಯ ನಾಡಿನಲ್ಲಿ ಕಂಡಿರಲಿಲ್ಲ.</verse>
				<verse number="12">ಅರಸ ಸೊಲೊಮೋನನು ಶೆಬಾದ ರಾಣಿಯಿಂದ ತನಗೆ ದೊರಕಿದ ಬಹುಮಾನಕ್ಕೆ ಪ್ರತಿಯಾಗಿ ಆಕೆಗೆ ತಾನು ಕೊಟ್ಟ ವಸ್ತುಗಳನ್ನಲ್ಲದೆ ಆಕೆ ಕೇಳಿದವುಗಳನ್ನೆಲ್ಲಾ ಕೊಟ್ಟುಬಿಟ್ಟನು. ಅನಂತರ ಆಕೆ ತನ್ನ ಪರಿವಾರದವರೊಡನೆ ಸ್ವದೇಶಕ್ಕೆ ಹೊರಟುಹೋದಳು.</verse>
				<verse number="13">ಸೊಲೊಮೋನನಿಗೆ ದೇಶಾಂತರ ವ್ಯಾಪಾರಿಗಳು, ವರ್ತಕರು, ಅರೇಬಿಯ ಅರಸರು ಹಾಗೂ ದೇಶಾಧಿಪತಿಗಳು ತರುತ್ತಿದ್ದ ಬೆಳ್ಳಿಬಂಗಾರವಲ್ಲದೆ,</verse>
				<verse number="14">ಪ್ರತಿವರ್ಷ ಸುಮಾರು 23,000 ಕಿಲೋಗ್ರಾಂ ಬಂಗಾರ ದೊರಕುತ್ತಿತ್ತು.</verse>
				<verse number="15">ಅರಸ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು; ಪ್ರತಿಯೊಂದು ಗುರಾಣಿಗೆ ಸುಮಾರು ಏಳು ಕಿಲೋಗ್ರಾಂ ಬಂಗಾರ ಹಿಡಿಯಿತು.</verse>
				<verse number="16">ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು; ಪ್ರತಿಯೊಂದು ಖೇಡ್ಯಕ್ಕೆ ಎರಡು ಕಿಲೋಗ್ರಾಂ ಬಂಗಾರ ಹಿಡಿಯಿತು. ಅವನು ಇವುಗಳನ್ನು ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರದಲ್ಲಿ ಇರಿಸಿದನು.</verse>
				<verse number="17">ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ, ಅದನ್ನು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು.</verse>
				<verse number="18">ಅದಕ್ಕೆ ಹೊಂದಿಕೆಯಾಗಿ ಆರು ಮೆಟ್ಟಿಲುಗಳೂ ಬಂಗಾರದ ಪಾದಪೀಠವೂ ಇದ್ದವು.</verse>
				<verse number="19">ಆರು ಮೆಟ್ಟಿಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.</verse>
				<verse number="20">ಅರಸ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು. ‘ಲೆಬನೋನಿನ ತೋಪು’ ಎನಿಸಿಕೊಳ್ಳುವ ಮಂದಿರದ ಎಲ್ಲಾ ಸಾಮಗ್ರಿಗಳು ಚೊಕ್ಕ ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆಯೇ ಇರಲಿಲ್ಲ.</verse>
				<verse number="21">ಅರಸನ ಹಡಗುಗಳು ಹೂರಾಮನ ನಾವಿಕರ ಜೊತೆಯಲ್ಲಿ ತಾರ್ಷೀಷಿಗೆ ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ಕಪಿ, ನವಿಲು ಇವುಗಳನ್ನು ತರುತ್ತಿದ್ದವು.</verse>
				<verse number="22">ಈ ಪ್ರಕಾರ ಅರಸ ಸೊಲೊಮೋನನು ಐಶ್ವರ್ಯದಲ್ಲೂ ಜ್ಞಾನದಲ್ಲೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು.</verse>
				<verse number="23">ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕಾಗಿ ಭೂರಾಜರೆಲ್ಲರು ಅವನ ದರ್ಶನಕ್ಕೆ ಬರುತ್ತಿದ್ದರು.</verse>
				<verse number="24">ಅವರೆಲ್ಲರು ಅವನಿಗೆ ವರ್ಷ ವರ್ಷವೂ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಾಯುಧ, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.</verse>
				<verse number="25">ಸೊಲೊಮೋನನ ಅಶ್ವಸಹಿತವಾದ ರಥಗಳು ನಾಲ್ಕು ಸಾವಿರ ಹಾಗೂ ರಾಹುತರು ಹನ್ನೆರಡು ಸಾವಿರ. ಇವುಗಳನ್ನು ಜೆರುಸಲೇಮಿನಲ್ಲಿ ತನ್ನ ಬಳಿಯಲ್ಲೂ ರಥಗಳಿಗಾಗಿ ನೇಮಿಸಿದ್ದ ಪಟ್ಟಣಗಳಲ್ಲೂ ಇರಿಸಿದ್ದನು.</verse>
				<verse number="26">ಅವನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಈಜಿಪ್ಟರ ದೇಶಗಳವರೆಗೂ ಇರುವ ಎಲ್ಲ ರಾಜರನ್ನು ಆಳುತ್ತಿದ್ದನು.</verse>
				<verse number="27">ಅರಸನ ಕಾಲದಲ್ಲಿ ಜೆರುಸಲೇಮಿನಲ್ಲಿ ಬೆಳ್ಳಿ, ಕಲ್ಲಿನಂತೆಯೂ ದೇವದಾರು ಮರಗಳು, ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳಂತೆಯೂ ವಿಫುಲವಾಗಿ ಇದ್ದವು.</verse>
				<verse number="28">ಸೊಲೊಮೋನನಿಗಾಗಿ ಈಜಿಪ್ಟ್ ಮುಂತಾದ ದೇಶಗಳಿಂದ ಕುದುರೆಗಳನ್ನು ತರುತ್ತಿದ್ದರು.</verse>
				<verse number="29">ಸೊಲೊಮೋನನ ಉಳಿದ ಪೂರ್ವೋತ್ತರ ಚರಿತ್ರೆಯನ್ನು, ಪ್ರವಾದಿ ನಾತಾನನ ಚರಿತ್ರೆ ಶೀಲೋವಿನವನಾದ ಅಹೀಯನ ಪ್ರವಾದನೆ ಹಾಗೂ ದಿವ್ಯದರ್ಶಿಯಾದ ಇದ್ದೋವನು ನೆಬಾಟನ ಮಗ ಯಾರೊಬ್ಬಾಮನನ್ನು ಕುರಿತು ನುಡಿದ ದರ್ಶನೋಕ್ತಿ ಎಂಬ ಗ್ರಂಥಗಳಲ್ಲಿ ಬರೆದಿಡಲಾಗಿ ಇದೆ.</verse>
				<verse number="30">ಸೊಲೊಮೋನನು ಜೆರುಸಲೇಮಿನಲ್ಲಿ ಇದ್ದುಕೊಂಡು ಎಲ್ಲ ಇಸ್ರಯೇಲರನ್ನು ನಾಲ್ವತ್ತು ವರ್ಷ ಆಳಿದನಂತರ ನಿಧನನಾಗಿ ಪಿತೃಗಳ ಬಳಿಗೆ ಸೇರಿದನು.</verse>
				<verse number="31">ಅವನ ಶವವನ್ನು ಅವನ ತಂದೆ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ರೆಹಬ್ಬಾಮನು ಅರಸನಾದನು.</verse>
			</chapter>
			<chapter number="10">
				<verse number="1">ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಇಸ್ರಯೇಲರೆಲ್ಲರು ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಕೂಡಿಬಂದಿದ್ದರು.</verse>
				<verse number="2">ಇತ್ತ ಅರಸ ಸೊಲೊಮೋನನಿಗೆ ತಪ್ಪಿಸಿಕೊಂಡು ಈಜಿಪ್ಟಿಗೆ ಓಡಿಹೋಗಿದ್ದ ನೆಬಾಟನ ಮಗ ಯಾರೊಬ್ಬಾಮನು ನಡೆದ ಸಂಗತಿಗಳನ್ನು ಕೇಳಿದೊಡನೆ ಈಜಿಪ್ಟಿನಿಂದ ಹಿಂದಿರುಗಿ ಬಂದಿದ್ದನು.</verse>
				<verse number="3">ಇಸ್ರಯೇಲರು ಅವನನ್ನೂ ತಮ್ಮ ಬಳಿಗೆ ಕರೆಸಿಕೊಂಡರು. ಅವನು ಎಲ್ಲ ಇಸ್ರಯೇಲರೊಡನೆ ರೆಹಬ್ಬಾಮನ ಬಳಿಗೆ ಹೋಗಿ,</verse>
				<verse number="4">“ನಿಮ್ಮ ತಂದೆ ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದ್ದರು; ಅವರು ನೇಮಿಸಿದ್ದ ಬಿಟ್ಟೀ ಕೆಲಸವನ್ನು ನೀನು ಕಡಿಮೆಮಾಡಿ, ನಮ್ಮ ಮೇಲಿರುವ ಈ ಭಾರವಾದ ನೊಗವನ್ನು ಹಗುರಮಾಡುವುದಾದರೆ ನಾವು ನಿಮಗೆ ಸೇವೆಮಾಡುತ್ತೇವೆ,” ಎಂದನು. ಅವನು,</verse>
				<verse number="5">“ನೀವು ಮೂರು ದಿನಗಳಾದ ನಂತರ ಮತ್ತೆ ಬನ್ನಿ,” ಎಂದು ಉತ್ತರಕೊಟ್ಟನು; ಜನರು ಹೊರಟುಹೋದರು.</verse>
				<verse number="6">ಆಗ ಅರಸ ರೆಹಬ್ಬಾಮನು ತನ್ನ ತಂದೆ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ, ತಾನು ಜನರಿಗೆ ಕೊಡಬೇಕಾದ ಉತ್ತರದ ಬಗ್ಗೆ ಅವರ ಆಲೋಚನೆಯನ್ನು ಕೇಳಿದನು.</verse>
				<verse number="7">ಅವರು, “ನೀವು ಈ ಜನರಿಗೆ ದಯೆತೋರಿಸಿ, ಅವರನ್ನು ಮೆಚ್ಚಿಸುವ ಒಳ್ಳೆಯ ಉತ್ತರಕೊಟ್ಟರೆ ಅವರು ಯಾವಾಗಲೂ ನಿಮಗೆ ಅಧೀನರಾಗಿರುವರು,” ಎಂದರು.</verse>
				<verse number="8">ಆದರೆ ಅವನು ಆ ಹಿರಿಯರ ಆಲೋಚನೆಯನ್ನು ನಿರಾಕರಿಸಿದನು. ತನ್ನ ಸಂಗಡವೇ ಬೆಳೆದು ತನಗೆ ಮಂತ್ರಿಗಳಾದ ಯೌವನಸ್ಥರನ್ನು ಕರೆಸಿದನು.</verse>
				<verse number="9">“ನನ್ನ ತಂದೆ ಹೇರಿದ ನೊಗವನ್ನು ಹಗುರಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.</verse>
				<verse number="10">ಅವರು ಅವನಿಗೆ, “ನಿಮ್ಮ ತಂದೆ ನಮ್ಮ ಮೇಲೆ ಹೇರಿರುವ ಭಾರವಾದ ನೊಗವನ್ನು ಹಗುರಮಾಡು ಎಂಬುದಾಗಿ ನಿಮ್ಮನ್ನು ಬೇಡಿಕೊಂಡ ಜನರಿಗೆ ನೀವು, ‘ನನ್ನ ತಂದೆಯ ಸೊಂಟಕ್ಕಿಂತ ನನ್ನ ಕಿರಿಬೆರಳು ದಪ್ಪ;</verse>
				<verse number="11">ನನ್ನ ತಂದೆ ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ; ಅವರು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ; ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು’ ಎಂಬುದಾಗಿ ಹೇಳಬೇಕು\, ಎಂದು ಉತ್ತರ ಕೊಟ್ಟರು.</verse>
				<verse number="12">ಯಾರೊಬ್ಬಾಮನೂ ಜನರೆಲ್ಲರೂ ಅರಸ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನ ಪುನಃ ಅವನ ಬಳಿಗೆ ಬಂದರು.</verse>
				<verse number="13">ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು; ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿದನು.</verse>
				<verse number="14">ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ, “ನನ್ನ ತಂದೆ ನಿಮ್ಮ ಮೇಲೆ ಭಾರವಾದ ನೊಗವನ್ನು ಹೇರಿರುವುದು ನಿಜ; ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುವೆನು. ಅವರು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ, ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು,” ಎಂದು ನುಡಿದನು.</verse>
				<verse number="15">ಅರಸನು ಜನರ ಮಾತನ್ನು ಕೇಳದೆ ಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಸರ್ವೇಶ್ವರ ಶಿಲೋವಿನವನಾದ ಅಹೀಯನ ಮುಖಾಂತರ ನೆಬಾಟನ ಮಗ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.</verse>
				<verse number="16">ತಮ್ಮ ಮಾತನ್ನು ಅರಸನು ಲಕ್ಷಿಸಲಿಲ್ಲ ಎಂದು ತಿಳಿದು, ಇಸ್ರಯೇಲರೆಲ್ಲರು ಅವನಿಗೆ, “ದಾವೀದನಿಗೂ ನಮಗೂ ಇನ್ನು ಮೇಲೆ ಏನೂ ಸಂಬಂಧವಿಲ್ಲ, ಜೆಸ್ಸೆಯ ಮಗನಿಗೂ ನಮಗೂ ಯಾವ ಬಾಧ್ಯತೆಯೂ ಇಲ್ಲ. ಇಸ್ರಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ತೆರಳಿರಿ; ದಾವೀದನ ಕಡೆಯವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿ,” ಎಂದು ಪ್ರತಿಭಟಿಸಿ ತಮ್ಮ ತಮ್ಮ ನಿವಾಸಗಳಿಗೆ ಹೊರಟುಹೋದರು.</verse>
				<verse number="17">ಜುದೇಯ ಪ್ರಾಂತ್ಯದಲ್ಲಿದ್ದ ಇಸ್ರಯೇಲರಾದರೋ ಅರಸ ರೆಹಬ್ಬಾಮನ ಅಧೀನದಲ್ಲೆ ಉಳಿದರು.</verse>
				<verse number="18">ರೆಹಬ್ಬಾಮನು ಬಿಟ್ಟೀಕೆಲಸದವರ ಮೇಲ್ವಿಚಾರಕರಾದ ಹದೋರಾಮನನ್ನು ಇಸ್ರಯೇಲರ ಬಳಿಗೆ ಕಳುಹಿಸಿದಾಗ, ಅವರು ಇವನನ್ನು ಕಲ್ಲೆಸೆದು ಕೊಂದರು. ಆಗ ಅರಸ ರೆಹಬ್ಬಾಮನು ಬೇಗನೆ ರಥವನ್ನೇರಿ ಜೆರುಸಲೇಮಿಗೆ ಓಡಿಹೋದನು.</verse>
				<verse number="19">ಇಸ್ರಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ.</verse>
			</chapter>
			<chapter number="11">
				<verse number="1">ರೆಹಬ್ಬಾಮನು ಜೆರುಸಲೇಮನ್ನು ಮುಟ್ಟಿದ ನಂತರ ಇಸ್ರಯೇಲರಿಗೆ ವಿರುದ್ಧ ಯುದ್ಧಮಾಡುವುದಕ್ಕೂ ಅವರ ರಾಜ್ಯವನ್ನು ಮರಳಿ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಬತ್ತು ಸಾವಿರ ಮಂದಿ ಶ್ರೇಷ್ಟ ಸೈನಿಕರನ್ನು ಕೂಡಿಸಿದನು.</verse>
				<verse number="2">ಆಗ ದೈವಪುರುಷನಾದ ಶೆಮಾಯನಿಗೆ ಸರ್ವೇಶ್ವರನ ಈ ವಾಣಿ ಕೇಳಿಸಿತು:</verse>
				<verse number="3">“ನೀನು ಹೋಗಿ ಸೊಲೊಮೋನನ ಮಗನೂ ಜುದೇಯದ ಅರಸನೂ ಆದ ರೆಹಬ್ಬಾಮನಿಗೂ ಯೆಹೂದ ಬೆನ್ಯಾಮೀನ್ ಕುಲಗಳ ಇಸ್ರಯೇಲರೆಲ್ಲರಿಗೂ,</verse>
				<verse number="4">‘ಸರ್ವೇಶ್ವರ ಇಂತೆನ್ನುತ್ತಾರೆ: ನೀವು ನಿಮ್ಮ ಸಹೋದರರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರು ಹಿಂದಿರುಗಿಹೋಗಿರಿ; ಈ ವಿಭಜನಾಕಾರ್ಯ ಸರ್ವೇಶ್ವರನಿಂದಾಗಿದೆ’ ಎಂದು ಹೇಳಬೇಕು.” ಅಂತೆಯೇ ಆ ಜನರು ಸರ್ವೇಶ್ವರನ ಮಾತನ್ನು ಕೇಳಿ ಯಾರೊಬ್ಬಾಮನಿಗೆ ವಿರೋಧವಾಗಿ ಹೊರಡದೆ ಹಿಂದಿರುಗಿ ಹೋದರು.</verse>
				<verse number="5">ರೆಹಬ್ಬಾಮನು ಜೆರುಸಲೇಮಿನಲ್ಲಿ ವಾಸವಾಗಿದ್ದು ಜುದೇಯದ ಈ ಕೆಳಕಂಡ ಪಟ್ಟಣಗಳನ್ನು ಭದ್ರಪಡಿಸಿದನು:</verse>
				<verse number="6">ಬೆತ್ಲೆಹೇಮ್, ಏತಾಮ್, ತೆಕೋವ,</verse>
				<verse number="7">ಬೇತ್ಚೂರ್, ಸೋಕೋ, ಅದುಲ್ಲಾಮ್, ಗತ್‍ಊರು,</verse>
				<verse number="8"></verse>
				<verse number="9">ಮಾರೇಷ, ಜೀಫ್, ಅದೋರೈಮ್, ಲಾಕೀಷ್,</verse>
				<verse number="10">ಅಜೇಕ, ಚೊರ್ಗ, ಅಯ್ಯಾಲೋನ್ ಹಾಗೂ ಹೆಬ್ರೋನ್. ಕೋಟೆಕೊತ್ತಲಗಳಿಂದ ಕೂಡಿದ್ದ ಈ ಪಟ್ಟಣಗಳು ಯೆಹೂದ-ಬೆನ್ಯಾಮೀನ್ ಕುಲ ಪ್ರಾಂತ್ಯಗಳಾಗಿದ್ದವು.</verse>
				<verse number="11">ಅವನುಈ ಕೋಟೆಗಳನ್ನು ಬಲಪಡಿಸಿ, ನಾಯಕರ ವಶಕ್ಕೆ ಕೊಟ್ಟು, ಪ್ರತಿ ಒಂದರಲ್ಲಿ ಆಹಾರಪದಾರ್ಥ, ಎಣ್ಣೆ, ದ್ರಾಕ್ಷಾರಸ ಇವುಗಳನ್ನೂ ಗುರಾಣಿಬರ್ಜಿಗಳನ್ನೂ ಸಂಗ್ರಹಿಸಿಟ್ಟನು.</verse>
				<verse number="12">ಹೀಗೆ ಇವುಗಳನ್ನು ಮತ್ತಷ್ಟು ಸುಭದ್ರಪಡಿಸಿದನು.</verse>
				<verse number="13">ಯೆಹೂದ, ಬೆನ್ಯಾಮೀನ್ ಕುಲಗಳವರು ಅವನ ಸ್ವಾಧೀನದಲ್ಲಿದ್ದುದಲ್ಲದೆ ಬೇರೆ ಎಲ್ಲ ಇಸ್ರಯೇಲ್ ಪ್ರಾಂತ್ಯಗಳಲ್ಲಿದ್ದ ಯಾಜಕರು ಹಾಗೂ ಲೇವಿಯರು ಅವನೊಡನೆ ಸೇರಿಕೊಂಡರು.</verse>
				<verse number="14">ಲೇವಿಯರು ಸರ್ವೇಶ್ವರನಿಗೆ ಯಾಜಕ ಸೇವೆಮಾಡದಂತೆ ಯಾರೊಬ್ಬಾಮನು ಮತ್ತು ಅವನ ಮಕ್ಕಳು ಅವರನ್ನು ಬಹಿಷ್ಕರಿಸಿ ಇದ್ದರು.</verse>
				<verse number="15">ತಾವೇ ಏರ್ಪಡಿಸಿದ್ದ ಪೂಜಾಸ್ಥಳಗಳಿಗಾಗಿ ಹಾಗೂ ಅಜದೇವತೆ, ಹೋರಿಕರುಗಳ ಮೂರ್ತಿಪೂಜೆಗಾಗಿ ಬೇರೆ ಪೂಜಾರಿಗಳನ್ನು ನೇಮಿಸಿಕೊಂಡಿದ್ದರು. ಆದುದರಿಂದ ಅವರು ಗೋಮಾಳಗಳಿದ್ದ ತಮ್ಮ ಸೊತ್ತುಗಳನ್ನು ಬಿಟ್ಟು ಜುದೇಯನಾಡಿಗೂ ಜೆರುಸಲೇಮಿಗೂ ಬಂದರು.</verse>
				<verse number="16">ಇಸ್ರಯೇಲರ ಎಲ್ಲ ಕುಲಗಳಲ್ಲಿ ಇಸ್ರಯೇಲ್ ದೇವರಾದ ಸರ್ವೇಶ್ವರನ ದರ್ಶನವನ್ನು ಬಯಸುತ್ತಿದ್ದವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನಿಗೆ ಬಲಿಯರ್ಪಿಸುವುದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಜೆರುಸಲೇಮಿಗೆ ಬಂದರು.</verse>
				<verse number="17">ಇವರೆಲ್ಲರು ಮೊದಲನೆಯ ಮೂರು ವರ್ಷಗಳಲ್ಲಿ ದಾವೀದ ಹಾಗೂ ಸೊಲೊಮೋನರ ಮಾರ್ಗದಲ್ಲೇ ನಡೆಯುತ್ತಿದ್ದರು. ಎಂದೇ ಜುದೇಯರಾಜ್ಯವು ಆ ವರ್ಷಗಳಲ್ಲಿ ವೃದ್ಧಿಯಾಗಿ, ಸೊಲೊಮೋನನ ಮಗ ರೆಹಬ್ಬಾಮನು ಬಲಿಷ್ಠನಾದನು.</verse>
				<verse number="18">ರೆಹಬ್ಬಾಮನು, ದಾವೀದನ ಮಗ ಯೆರೀಮೋತನಿಗೆ ಜೆಸ್ಸೆಯ ಮೊಮ್ಮಗಳೂ ಎಲೀಯಾಬನ ಮಗಳೂ ಆದ ಅಬೀಹೈಲಳಲ್ಲಿ ಹುಟ್ಟಿದ ಮಹ್ಲತ್ ಎಂಬಾಕೆಯನ್ನು ಹೆಂಡತಿಯನ್ನಾಗಿ ತೆಗೆದುಕೊಂಡನು.</verse>
				<verse number="19">ಆಕೆ ಅವನಿಂದ ಯೆಗೂಷ್, ಶೆಮರ್ಯ, ಜಾಹಮ್ ಎಂಬ ಗಂಡು ಮಕ್ಕಳನ್ನು ಹೆತ್ತಳು.</verse>
				<verse number="20">ಅನಂತರ ಅವನು ಅಬ್ಷಾಲೋಮನ ಮಗಳಾದ ಮಾಕ ಎಂಬಾಕೆಯನ್ನು ಮದುವೆ ಮಾಡಿಕೊಂಡನು; ಆಕೆ ಅವನಿಂದ ಅಬೀಯ, ಅತ್ತೈ, ಜೀಜ, ಶೆಲೋಮೀತ್ ಎಂಬುವರನ್ನು ಹೆತ್ತಳು.</verse>
				<verse number="21">ರೆಹಬ್ಬಾಮನು ತನ್ನ ಎಲ್ಲಾ ಪತ್ನಿಯರಲ್ಲಿಯೂ ಉಪಪತ್ನಿಯರಲ್ಲಿಯೂ ಅಬ್ಷಾಲೋಮನ ಮಗಳಾದ ಮಾಕಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದನು. ಅವನಿಗೆ ಹದಿನೆಂಟು ಮಂದಿ ಪತ್ನಿಯರೂ ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಇವರಲ್ಲಿ ಅವನಿಗೆ ಇಪ್ಪತ್ತ ಎಂಟು ಮಂದಿ ಗಂಡುಮಕ್ಕಳೂ ಅರವತ್ತು ಮಂದಿ ಹೆಣ್ಣು ಮಕ್ಕಳೂ ಹುಟ್ಟಿದರು.</verse>
				<verse number="22">ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅರಸನನ್ನಾಗಿ ಮಾಡಬೇಕೆಂದು ಅವನನ್ನು ಅವನ ಅಣ್ಣತಮ್ಮಂದಿರಲ್ಲಿ ಪ್ರಧಾನನನ್ನಾಗಿಯೂ ನೇಮಿಸಿದನು.</verse>
				<verse number="23">ತನ್ನ ಉಳಿದ ಎಲ್ಲ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ ಯೆಹೂದ-ಬೆನ್ಯಾಮೀನ್ ಕುಲಪ್ರದೇಶಗಳಲ್ಲಿ ಇದ್ದ ಕೋಟೆ ಕೊತ್ತಲುಗಳಿಂದ ಕೂಡಿದ ಆಯಾ ಪಟ್ಟಣಗಳಲ್ಲಿಟ್ಟು, ಅವರಿಗೆ ಬೇಕಾದಷ್ಟು ಜೀವನಾಂಶವನ್ನು ಏರ್ಪಡಿಸಿ, ಹಲವಾರು ಹೆಂಡತಿಯರನ್ನೂ ಗೊತ್ತುಮಾಡಿಕೊಟ್ಟನು.</verse>
			</chapter>
			<chapter number="12">
				<verse number="1">ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸುಭದ್ರಪಡಿಸಿಕೊಂಡ ಮೇಲೆ ಅವನೂ ಅವನ ಪ್ರಜೆಗಳಾದ ಇಸ್ರಯೇಲರೆಲ್ಲರೂ ಸರ್ವೇಶ್ವರನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು;</verse>
				<verse number="2">ಸರ್ವೇಶ್ವರನಿಗೆ ದ್ರೋಹಿಗಳಾದರು. ಅರಸ ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ</verse>
				<verse number="3">ಈಜಿಪ್ಟಿನ ಅರಸ ಶೀಶಕನು, ಸಾವಿರದ ಇನ್ನೂರು ರಥಗಳನ್ನೂ ಅರವತ್ತು ಸಾವಿರ ಮಂದಿ ರಾಹುತರನ್ನೂ ಈಜಿಪ್ಟಿನ, ಲಿಬ್ಯದ, ಸುಕ್ಕೀಯದ ಹಾಗೂ ಕೂಷ್ಯದ ಅಸಂಖ್ಯ ಸೈನಿಕರನ್ನೂ ಕೂಡಿಸಿಕೊಂಡು ಜೆರುಸಲೇಮಿಗೆ ಹೊರಟುಬಂದನು.</verse>
				<verse number="4">ಜುದೇಯ ನಾಡಿನ ಕೋಟೆಕೊತ್ತಲುಗಳಿಂದ ಕೂಡಿದ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡ ನಂತರ ಜೆರುಸಲೇಮನ್ನು ಸಮೀಪಿಸಿದನು.</verse>
				<verse number="5">ಆಗ ಪ್ರವಾದಿ ಶೆಮಾಯನು ರೆಹಬ್ಬಾಮನ ಬಳಿಗೆ ಹಾಗೂ ಶೀಶಕನಿಗೆ ಹೆದರಿ ಜೆರುಸಲೇಮಿನಲ್ಲಿ ಕೂಡಿದ್ದ ಯೆಹೂದ್ಯ ಪ್ರಧಾನರ ಬಳಿಗೆ ಬಂದು, “ನೀವು ನನ್ನನ್ನು ಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಗೆ ಬಿಟ್ಟುಬಿಟ್ಟಿದ್ದೇನೆ,” ಎನ್ನುತ್ತಾರೆ ಸರ್ವೇಶ್ವರ ಎಂದು ಹೇಳಿದನು.</verse>
				<verse number="6">ಆಗ ಅರಸನೂ ಇಸ್ರಯೇಲ್ ಪ್ರಧಾನರೂ, ಸರ್ವೇಶ್ವರಸ್ವಾಮಿ ನ್ಯಾಯವಂತರೆಂದು ಒಪ್ಪಿಕೊಂಡು ತಮ್ಮನ್ನೇ ತಗ್ಗಿಸಿಕೊಂಡರು.</verse>
				<verse number="7">ಸರ್ವೇಶ್ವರ ಇದನ್ನು ನೋಡಿ ಶೆಮಾಯನಿಗೆ, “ಇವರು ತಮ್ಮನ್ನೇ ತಗ್ಗಿಸಿಕೊಂಡದ್ದರಿಂದ ಇವರನ್ನು ಸಂಹರಿಸುವುದಿಲ್ಲ; ಸ್ವಲ್ಪಕಾಲದಲ್ಲೇ ಇವರಿಗೆ ರಕ್ಷಣೆಯನ್ನು ಅನುಗ್ರಹಿಸುವೆನು; ಶೀಶಕನ ಮುಖಾಂತರ ನನ್ನ ರೌದ್ರವನ್ನು ಜೆರುಸಲೇಮಿನ ಮೇಲೆ ಸುರಿದುಬಿಡುವುದಿಲ್ಲ.</verse>
				<verse number="8">ಆದರೂ ನನ್ನ ಸೇವೆಗೂ ಅನ್ಯರಾಜ್ಯಗಳ ಸೇವೆಗೂ ಇರುವ ವ್ಯತ್ಯಾಸ ಇವರಿಗೆ ಗೊತ್ತಾಗುವಂತೆ ಇವರು ಶೀಶಕನಿಗೆ ದಾಸರಾಗಬೇಕು,” ಎಂದು ಹೇಳಿದರು.</verse>
				<verse number="9">ಹೀಗೆ ಜೆರುಸಲೇಮಿಗೆ ವಿರೋಧವಾಗಿ ಬಂದ ಈಜಿಪ್ಟಿನ ರಾಜ ಶೀಶಕನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಎಲ್ಲ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ್ದ ಬಂಗಾರದ ಗುರಾಣಿಗಳನ್ನೂ ದೋಚಿಕೊಂಡು ಹೋದನು.</verse>
				<verse number="10">ಅರಸ ರೆಹಬ್ಬಾಮನು ಅವುಗಳಿಗೆ ಬದಲಾಗಿ ಕಂಚಿನ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು.</verse>
				<verse number="11">ಅರಸನು ಸರ್ವೇಶ್ವರನ ಆಲಯಕ್ಕೆ ಹೋಗುವಾಗಲೆಲ್ಲಾ ಮೈಗಾವಲಿನವರು ಅವುಗಳನ್ನು ಹಿಡಿದುಕೊಂಡು ಹೋಗುತ್ತಿದ್ದರು; ಅಲ್ಲಿಂದ ಹಿಂದಕ್ಕೆ ಬಂದ ಮೇಲೆ ಅವುಗಳನ್ನು ತಮ್ಮ ಕೋಣೆಯಲ್ಲಿ ಇಡುತ್ತಿದ್ದರು.</verse>
				<verse number="12">ರೆಹಬ್ಬಾಮನು ತನ್ನನ್ನು ತಗ್ಗಿಸಿಕೊಂಡದ್ದರಿಂದ ಹಾಗೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರುತ್ತಿದ್ದುದರಿಂದ ಸರ್ವೇಶ್ವರಸ್ವಾಮಿ ರೆಹಬ್ಬಾಮನ ಮೇಲಿದ್ದ ಕೋಪವನ್ನು ತೊರೆದುಬಿಟ್ಟರು; ಅವನನ್ನು ಪೂರ್ತಿಯಾಗಿ ಹಾಳುಮಾಡಲಿಲ್ಲ.</verse>
				<verse number="13">ಅರಸ ರೆಹಬ್ಬಾಮನು ಜೆರುಸಲೇಮಿನಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಪಟ್ಟಕ್ಕೆ ಬಂದದ್ದು ತನ್ನ ನಲವತ್ತೊಂದನೆಯ ವರ್ಷದಲ್ಲಿ. ಸರ್ವೇಶ್ವರ ಎಲ್ಲಾ ಕುಲಪ್ರಾಂತ್ಯಗಳಿಂದ ತಮ್ಮ ಹೆಸರಿಗಾಗಿ ಆರಿಸಿಕೊಂಡ ಜೆರುಸಲೇಮಿನಲ್ಲಿ ಅವನು ಹದಿನೇಳು ವರ್ಷ ಆಳಿದನು. ಅಮ್ಮೋನಿಯಳಾದ ನಯಮಾ ಎಂಬಾಕೆ ಅವನ ತಾಯಿ.</verse>
				<verse number="14">ಅವನು ಸರ್ವೇಶ್ವರನಿಗೆ ವಿಧೇಯನಾಗಿ ನಡೆಯಲು ಮನಸ್ಸುಮಾಡದೆ ದ್ರೋಹಿಯಾದನು.</verse>
				<verse number="15">ರೆಹಬ್ಬಾಮನ ಪೂರ್ವೋತ್ತರ ಕೃತ್ಯಗಳು ಪ್ರವಾದಿಯಾದ ಶೆಮಾಯ ಹಾಗೂ ದರ್ಶಿಯಾದ ಇದ್ದೋ ಎಂಬುವರ ಚರಿತ್ರೆಗಳ ವಂಶಾವಳಿ ಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು.</verse>
				<verse number="16">ರೆಹಬ್ಬಾಮನು ಮೃತನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವಕ್ಕೆ ದಾವೀದ ನಗರದಲ್ಲಿ ಸಮಾಧಿಯಾಯಿತು. ಅವನ ಮಗ ಅಬೀಯನು ಅವನಿಗೆ ಬದಲಾಗಿ ಅರಸನಾದನು.</verse>
			</chapter>
			<chapter number="13">
				<verse number="1">ಅರಸ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯನು ಜುದೇಯದ ಅರಸನಾಗಿ</verse>
				<verse number="2">ಜೆರುಸಲೇಮಿನಲ್ಲಿ ಮೂರು ವರ್ಷ ಆಳಿದನು. ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆ ಇವನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯಿತು.</verse>
				<verse number="3">ಅಬೀಯನು ನಾಲ್ಕು ಲಕ್ಷ ಮಂದಿ ರಣವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು. ಯಾರೊಬ್ಬಾಮನು ಎಂಟು ಲಕ್ಷ ಶ್ರೇಷ್ಠಯೋಧರೊಡನೆ ಅವನಿಗೆ ವಿರೋಧವಾಗಿ ಬಂದು ವ್ಯೂಹಕಟ್ಟಿದನು.</verse>
				<verse number="4">ಆಗ ಅಬೀಯನು ಎಫ್ರಯಿಮ್ ಪರ್ವತಪ್ರದೇಶದಲ್ಲಿರುವ ಚೆಮಾರೈಮೆಂಬ ಬೆಟ್ಟದಲ್ಲಿ ನಿಂತು, “ಯಾರೊಬ್ಬಾಮನೇ, ಎಲ್ಲಾ ಇಸ್ರಯೇಲರೇ, ನನ್ನ ಮಾತಿಗೆ ಕಿವಿಗೊಡಿ;</verse>
				<verse number="5">ಮುರಿಯಲಾಗದ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಯೇಲರ ಮೇಲೆ ಸರ್ವೇಶ್ವರ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾರೆಂದು ನಿಮಗೆ ಗೊತ್ತಿಲ್ಲವೇ?</verse>
				<verse number="6">ಹೀಗೆ ಇದ್ದರೂ ದಾವೀದನ ಮಗ ಸೊಲೊಮೋನನ ಸೇವೆಯಲ್ಲಿದ್ದ, ನೆಬಾಟನ ಮಗ ಯಾರೊಬ್ಬಾಮನು ದಂಗೆಯೆದ್ದು ತನ್ನ ದಣಿಗೆ ವಿರುದ್ಧ ದ್ರೋಹವೆಸಗಿದ;</verse>
				<verse number="7">ಕಾಕಪೋಕರೂ ದುಷ್ಟರೂ ಆದ ಜನರನ್ನು ಕೂಡಿಕೊಂಡ ಎಳೇಪ್ರಾಯದವನೂ ಮುಗ್ಧನೂ ತಮ್ಮೆದುರಿನಲ್ಲಿ ನಿಲ್ಲಲು ಅಶಕ್ತನೂ ಆದ ಸೊಲೊಮೋನನ ಮಗ ರೆಹಬ್ಬಾಮನನ್ನು ಇವರು ಪ್ರತಿಭಟಿಸಿ ಬಲಗೊಂಡರು.</verse>
				<verse number="8">ಈಗ ನೀವು ದೊಡ್ಡ ಗುಂಪಾಗಿ ಇರುವುದರಿಂದ ಹಾಗು ಯಾರೊಬ್ಬಾಮನು ನಿಮಗೆ ದೇವರುಗಳೆಂದು ಮಾಡಿಕೊಟ್ಟ ಬಂಗಾರದ ಹೋರಿಕರುಗಳ ಮೂರ್ತಿಗಳು ನಿಮ್ಮಲ್ಲಿರುವುದರಿಂದ, ದಾವೀದನ ಸಂತಾನದವರ ಕೈಯಲ್ಲಿರುವ ಸರ್ವೇಶ್ವರನ ರಾಜ್ಯಕ್ಕೆ ವಿರುದ್ಧ ದಂಗೆಯೆದ್ದು ಗೆಲ್ಲಬಹುದೆಂದು ನೆನಸುತ್ತೀರೋ?</verse>
				<verse number="9">ನೀವು ಸರ್ವೇಶ್ವರನ ಯಾಜಕರಾದ ಆರೋನನ ಸಂತಾನದವರನ್ನೂ ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗಾಗಿ ಪೂಜಾರಿಗಳನ್ನು ನೇಮಿಸಿಕೊಂಡಿದ್ದೀರಿ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ!</verse>
				<verse number="10">ನಮಗಾದರೋ ಸರ್ವೇಶ್ವರನೊಬ್ಬನೇ ದೇವರು; ನಾವು ಅವರನ್ನು ಬಿಡಲಿಲ್ಲ. ಸರ್ವೇಶ್ವರನ ಆರಾಧನೆ ನಡೆಸಲು ಆರೋನನ ಸಂತಾನದವರಾದ ಯಾಜಕರು ಹಾಗೂ ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರು ನಮಗಿರುತ್ತಾರೆ.</verse>
				<verse number="11">ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ ಸರ್ವೇಶ್ವರನಿಗಾಗಿ ದಹನಬಲಿಗಳನ್ನು ಸಮರ್ಪಿಸುತ್ತಾ, ಸುಗಂಧದ್ರವ್ಯಗಳ ಧೂಪಾರತಿ ಎತ್ತುತ್ತಾ, ಚೊಕ್ಕಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ, ಪ್ರತೀ ಸಾಯಂಕಾಲ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಸರ್ವೇಶ್ವರನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಅವರನ್ನು ತೊರೆದುಬಿಟ್ಟವರು.</verse>
				<verse number="12">ಇಗೋ, ದೇವರೇ ನಾಯಕರಾಗಿ ನಮ್ಮೊಂದಿಗಿರುತ್ತಾರೆ; ನಿಮಗೆ ವಿರುದ್ಧ ಯುದ್ಧ ಕಹಳೆಗಳನ್ನು ಮೊಳಗಿಸುವ ಯಾಜಕರೂ ನಮ್ಮೊಂದಿಗೆ ಇರುತ್ತಾರೆ. ಇಸ್ರಯೇಲರೇ, ನಿಮ್ಮ ಪೂರ್ವಜರ ದೇವರಾದ ಸರ್ವೇಶ್ವರನೊಡನೆ ಯುದ್ಧಮಾಡಬೇಡಿ; ನೀವು ಜಯಿಸಲಾರಿರಿ,” ಎಂದು ಕೂಗಿ ಹೇಳಿದನು.</verse>
				<verse number="13">ಯಾರೊಬ್ಬಾಮನು ಯೆಹೂದ್ಯರ ಹಿಂದೆ ಹೊಂಚುಹಾಕುವುದಕ್ಕಾಗಿ ತನ್ನ ಸೈನ್ಯದ ಒಂದು ಗುಂಪನ್ನು ಕಳುಹಿಸಿದನು. ಹೀಗೆ ಶತ್ರುಸೈನ್ಯ ಯೆಹೂದ್ಯರ ಮುಂದೆಯೂ ಹೊಂಚುಹಾಕುವವರು ಅವರ ಹಿಂದೆಯೂ ಇದ್ದರು.</verse>
				<verse number="14">ಯೆಹೂದ್ಯರು ತಮ್ಮ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾಗಿರುವುದನ್ನು ಕಂಡು ಸರ್ವೇಶ್ವರನಿಗೆ ಅಭಿಮುಖರಾಗಿ ಮೊರೆಯಿಟ್ಟರು; ಯಾಜಕರು ಕಹಳೆಗಳನ್ನು ಊದಿದರು.</verse>
				<verse number="15">ಅನಂತರ ಜನರು ಆರ್ಭಟಿಸಿದರು. ಅವರು ಆರ್ಭಟಿಸಿದ ಕೂಡಲೆ ದೇವರು ಯಾರೊಬ್ಬಾಮನನ್ನೂ ಎಲ್ಲಾ ಇಸ್ರಯೇಲರನ್ನೂ ಅಬೀಯನಿಂದ ಹಾಗೂ ಯೆಹೂದ್ಯರಿಂದ ಅಪಜಯಗೊಳಿಸಿದರು.</verse>
				<verse number="16">ಹೀಗಾಗಿ ಇಸ್ರಯೇಲರು ಯೆಹೂದ್ಯರ ಎದುರಿನಿಂದ ಓಡಿಹೋದರು. ದೇವರು ಅವರನ್ನು ಯೆಹೂದ್ಯರ ಕೈಗೆ ಒಪ್ಪಿಸಿದರು.</verse>
				<verse number="17">ಅಬೀಯನೂ ಅವನ ಜನರೂ ಅವರಲ್ಲಿ ಅನೇಕಾನೇಕರನ್ನು ಸದೆಬಡಿದರು. ಇಸ್ರಯೇಲ್ ಯೋಧರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ.</verse>
				<verse number="18">ಹೀಗೆ ಇಸ್ರಯೇಲರು ಆ ಕಾಲದಲ್ಲಿ ಸೋಲು ಸವಿದರು; ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನಲ್ಲಿ ಭರವಸೆಯಿಟ್ಟದ್ದರಿಂದ ಜಯಶೀಲರಾದರು.</verse>
				<verse number="19">ಅಬೀಯನು ಯಾರೊಬ್ಬಾಮನನ್ನು ಹಿಂದಟ್ಟಿ, ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.</verse>
				<verse number="20">ಯಾರೊಬ್ಬಾಮನು ಅಬೀಯನ ಜೀವಮಾನದಲ್ಲಿ ಮತ್ತೆ ತಲೆಯೆತ್ತಲೇ ಇಲ್ಲ. ಕಾಲಕ್ರಮೇಣ, ಸರ್ವೇಶ್ವರನ ದಂಡನೆಯಿಂದ ಅವನು ಸತ್ತನು.</verse>
				<verse number="21">ಇತ್ತ ಅಬೀಯನು ಪ್ರಬಲನಾದನು. ಅವನಿಗೆ ಹದಿನಾಲ್ಕು ಮಂದಿ ಹೆಂಡತಿಯರೂ ಇಪ್ಪತ್ತೆರಡು ಮಂದಿ ಗಂಡುಮಕ್ಕಳೂ ಹದಿನಾರು ಮಂದಿ ಹೆಣ್ಣುಮಕ್ಕಳೂ ಇದ್ದರು.</verse>
				<verse number="22">ಅಬೀಯನ ಉಳಿದ ಚರಿತ್ರೆ ಹಾಗೂ ನಡೆನುಡಿಗಳು ಪ್ರವಾದಿ ಇದ್ದೋವಿನ ವ್ಯಾಖ್ಯಾನದಲ್ಲಿ ಲಿಖಿತವಾಗಿವೆ.</verse>
			</chapter>
			<chapter number="14">
				<verse number="1">ಅಬೀಯನು ಮೃತನಾಗಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಸನು ಅರಸನಾದನು. ಇವನ ಕಾಲದಲ್ಲಿ, ನಾಡಿನಲ್ಲಿ ಹತ್ತು ವರ್ಷ ಶಾಂತಿಸಮಾಧಾನವಿತ್ತು.</verse>
				<verse number="2">ಆಸನು ತನ್ನ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು.</verse>
				<verse number="3">ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿಸಿದನು. ಕಲ್ಲುಕಂಬಗಳನ್ನು ಒಡೆದು ಹಾಕಿಸಿದನು. ಅಶೇರ ವಿಗ್ರಹಸ್ತಂಭಗಳನ್ನು ಕೆಡವಿಬಿಟ್ಟನು.</verse>
				<verse number="4">ಯೆಹೂದ್ಯರಿಗೆ, “ನೀವು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರವಿಧಿಗಳನ್ನು ಕೈಗೊಳ್ಳಿರಿ,” ಎಂದು ಆಜ್ಞಾಪಿಸಿದನು.</verse>
				<verse number="5">ಜುದೇಯದ ಎಲ್ಲ ಪಟ್ಟಣಗಳಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದು ಹಾಕಿಸಿದನು. ಇವನ ಆಳ್ವಿಕೆಯಲ್ಲಿ ರಾಜ್ಯದೊಳಗೆ ಸಮಾಧಾನ ವಿತ್ತು.</verse>
				<verse number="6">ಸರ್ವೇಶ್ವರನ ಅನುಗ್ರಹದಿಂದ ಶತ್ರುಭಯ ತಪ್ಪಿ, ಆ ವರ್ಷಗಳಲ್ಲಿ ಯಾವ ಯುದ್ಧವೂ ಇಲ್ಲದೆ, ನಾಡಿನಲ್ಲಿ ಸಮಾಧಾನವಿದ್ದುದರಿಂದ ಇವನು ಜುದೇಯದಲ್ಲಿ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು.</verse>
				<verse number="7">ಇವನು ಯೆಹೂದ್ಯರಿಗೆ, “ನಾವು ನಮ್ಮ ದೇವರಾದ ಸರ್ವೇಶ್ವರನನ್ನು ಆಶ್ರಯಿಸಿಕೊಂಡ ಕಾರಣ, ಅವರ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ, ನಾಡು ಈವರೆಗೆ ನಿರಾತಂಕವಾಗಿದೆ. ಆದುದರಿಂದ ನಾವು ಪಟ್ಟಣಗಳನ್ನು ಕಟ್ಟಿ ಅವುಗಳನ್ನು ಸುತ್ತಣ ಗೋಡೆ, ಬುರುಜು, ಬಾಗಿಲು, ಅಗುಳಿ ಇವುಗಳಿಂದ ಭದ್ರಪಡಿಸೋಣ,” ಎಂದನು. ಅವರು ಅವುಗಳನ್ನು ಚೆನ್ನಾಗಿ ಕಟ್ಟಿ ಮುಗಿಸಿದರು.</verse>
				<verse number="8">ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿ ಬರ್ಜಿಗಳನ್ನು ಹಿಡಿದ ಮೂರು ಲಕ್ಷ ಮಂದಿ ಯೆಹೂದ್ಯರಿದ್ದರು. ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆದ ಎರಡು ಲಕ್ಷದ ಎಂಬತ್ತು ಸಾವಿರ ಮಂದಿ ಬೆನ್ಯಾಮೀನ್ಯರೂ ಇದ್ದರು. ಇವರೆಲ್ಲರು ರಣವೀರರು.</verse>
				<verse number="9">ಸುಡಾನಿನ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಯೇಲರಿಗೆ ವಿರುದ್ಧ ಯುದ್ಧಕ್ಕೆ ಹೊರಟು ಮಾರೇಷಕ್ಕೆ ಬಂದನು.</verse>
				<verse number="10">ಆಸನು ಅವನನ್ನು ಎದುರುಗೊಳ್ಳಲು ಹೋದನು. ಮಾರೇಷದ ಬಳಿಯಲ್ಲಿದ್ದ ಚೆಫಾತಾ ಬಯಲಿನಲ್ಲಿ ಉಭಯರೂ ವ್ಯೂಹಕಟ್ಟಿದರು.</verse>
				<verse number="11">ಆಸನು ತನ್ನ ದೇವರಾದ ಸರ್ವೇಶ್ವರನಿಗೆ, “ಸರ್ವೇಶ್ವರಾ, ಬಲಿಷ್ಠನು ಬಲಹೀನನ ಮೇಲೆ ಬೀಳುವಾಗ, ನಿಮ್ಮ ಹೊರತು ರಕ್ಷಕನಿಲ್ಲ. ನಿಮ್ಮಲ್ಲಿ ಭರವಸೆ ಇಟ್ಟು ನಿಮ್ಮ ಹೆಸರಿನಲ್ಲಿ ಈ ಮಹಾ ಸೇನೆಗೆ ವಿರುದ್ಧ ಯುದ್ಧಕ್ಕೆ ಬಂದಿದ್ದೇವೆ. ಸರ್ವೇಶ್ವರಾ, ನಮ್ಮ ದೇವರು ನೀವು; ನರರು ನಿಮ್ಮನ್ನು ಎದುರಿಸಿ ಗೆಲ್ಲಬಾರದು,” ಎಂದು ಮೊರೆ ಇಟ್ಟನು.</verse>
				<verse number="12">ಸರ್ವೇಶ್ವರ ಅರಸನಿಂದಲೂ ಯೆಹೂದ್ಯರಿಂದಲೂ ಸುಡಾನರಿಗೆ ಅಪಜಯ ಉಂಟಾಗುವಂತೆ ಮಾಡಿದರು.</verse>
				<verse number="13">ಅವರು ಸೋತು ಓಡಿಹೋದಾಗ ಆಸನೂ ಅವನ ಜನರೂ ಗೆರಾರಿನವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದರು. ಅವರಲ್ಲಿ ಯಾರೂ ಜೀವದಿಂದುಳಿಯಲಿಲ್ಲ. ಸರ್ವೇಶ್ವರನ ಮತ್ತು ಅವರ ಸೈನ್ಯದ ಮುಂದೆ ಸುಡಾನರು ಭಿನ್ನಭಿನ್ನರಾದರು. ಇಸ್ರಯೇಲರಿಗೆ ಅಪರಿಮಿತವಾದ ಕೊಳ್ಳೆಸಿಕ್ಕಿತು.</verse>
				<verse number="14">ಇದಲ್ಲದೆ ಸರ್ವೇಶ್ವರನ ಭಯದಿಂದ ತಬ್ಬಿಬ್ಬಾದ ಗೆರಾರಿನ ಸುತ್ತಣ ಪಟ್ಟಣಗಳನ್ನು ಅವರು ವಶಪಡಿಸಿಕೊಂಡು, ಅವುಗಳನ್ನೆಲ್ಲಾ ಸುಲಿಗೆಮಾಡಿದರು. ಅವುಗಳಲ್ಲೂ ದೊಡ್ಡ ಕೊಳ್ಳೆ ಸಿಕ್ಕಿತು.</verse>
				<verse number="15">ದನಕಾಯುವವರ ಗುಡಾರಗಳ ಮೇಲೆ ದಾಳಿಮಾಡಿ ಎಷ್ಟೋ ಒಂಟೆಕುರಿಗಳನ್ನು ಜೆರುಸಲೇಮಿಗೆ ಹೊಡೆದುಕೊಂಡು ಬಂದರು.</verse>
			</chapter>
			<chapter number="15">
				<verse number="1">ಓದೇದನ ಮಗ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು.</verse>
				<verse number="2">ಅವನು ಆಸನನ್ನು ಭೇಟಿಯಾಗಲು ಬಂದು, ಅವನಿಗೆ, “ಆಸ ರಾಜನೇ, ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿ; ನೀವು ಸರ್ವೇಶ್ವರನನ್ನು ಹೊಂದಿಕೊಂಡಿರುವ ತನಕ ಅವರೂ ನಿಮ್ಮೊಂದಿಗಿರುವರು; ನೀವು ಅವರನ್ನು ಅರಸಿದರೆ ನಿಮಗೆ ಸಿಕ್ಕುವರು. ಅವರನ್ನು ಬಿಟ್ಟರೆ ಅವರೂ ನಿಮ್ಮನ್ನು ಬಿಟ್ಟುಬಿಡುವರು.</verse>
				<verse number="3">ಇಸ್ರಯೇಲರಿಗೆ ಬಹುಕಾಲದವರೆಗೆ ನಿಜವಾದ ದೇವರು, ಬೋಧಿಸುವ ಯಾಜಕರು ಹಾಗೂ ಧರ್ಮಶಾಸ್ತ್ರ ಇರಲಿಲ್ಲ.</verse>
				<verse number="4">ಅವರು ತಮ್ಮ ಇಕ್ಕಟ್ಟಿನಲ್ಲಿ ಇಸ್ರಯೇಲ್ ದೇವರಾದ ಸರ್ವೇಶ್ವರನ ಕಡೆಗೆ ತಿರುಗಿಕೊಂಡರು; ಹುಡುಕಿದಾಗ ಸರ್ವೇಶ್ವರ ಅವರಿಗೆ ಸಿಕ್ಕಿದರು.</verse>
				<verse number="5">ಆ ಕಾಲದಲ್ಲಿ ಯಾರಿಗೂ ನಿರ್ಭಯವಾಗಿ ತಿರುಗಾಡುವುದಕ್ಕೆ ಆಗುತ್ತಾ ಇರಲಿಲ್ಲ. ನಾಡಿನ ನಿವಾಸಿಗಳೆಲ್ಲರೂ ಕಳವಳಗೊಂಡಿದ್ದರು.</verse>
				<verse number="6">ಒಂದು ಜನಾಂಗ ಇನ್ನೊಂದು ಜನಾಂಗವನ್ನೂ ಒಂದು ಪಟ್ಟಣದವರು ಇನ್ನೊಂದು ಪಟ್ಟಣದವರನ್ನೂ ಹಾಳುಮಾಡುತ್ತಿದ್ದರು. ದೇವರು ನಾನಾ ತರದ ಕಷ್ಟದಿಂದ ಅವರನ್ನು ತಳಮಳಗೊಳಿಸಿದ್ದರು.</verse>
				<verse number="7">ನೀವಾದರೋ ಸ್ಥಿರಚಿತ್ತರಾಗಿರಿ; ನಿಮ್ಮ ಕೈಗಳು ಜೋಲುಬೀಳದಿರಲಿ. ನಿಮ್ಮ ಪ್ರಯತ್ನಕ್ಕೆ ಫಲತಪ್ಪದು,” ಎಂದು ಹೇಳಿದನು.</verse>
				<verse number="8">ಆಸನು ಓದೇದನ ಮಗ ಅಜರ್ಯನ ಈ ಪ್ರವಾದನೋಕ್ತಿಗಳನ್ನು ಕೇಳಿ ಧೈರ್ಯಗೊಂಡನು. ಜುದೇಯ ಹಾಗೂ ಬೆನ್ಯಾಮೀನ್ ಪ್ರಾಂತ್ಯಗಳಲ್ಲೂ ತಾನು ಸ್ವಾಧೀನಮಾಡಿಕೊಂಡಿದ್ದ ಎಫ್ರಯಿಮ್ ಪರ್ವತ ಪ್ರದೇಶದ ಪಟ್ಟಣಗಳಲ್ಲೂ ಇದ್ದ ಅಸಹ್ಯ ಪ್ರತಿಮೆಗಳನ್ನು ತೆಗೆದು ಹಾಕಿಸಿದನು; ಸರ್ವೇಶ್ವರನ ಆಲಯಕ್ಕೆ ಸೇರಿದ ಮಂಟಪದ ಮುಂದಿದ್ದ ಬಲಿಪೀಠವನ್ನು ದುರಸ್ತಿ ಮಾಡಿಸಿದನು.</verse>
				<verse number="9">ಆಮೇಲೆ ಆಸನು ಎಲ್ಲಾ ಯೆಹೂದ ಹಾಗೂ ಬೆನ್ಯಾಮೀನ್ ಕುಲಗಳವರನ್ನು ಬರಮಾಡಿದನು. ದೇವರಾದ ಸರ್ವೇಶ್ವರ ತನ್ನೊಂದಿಗೆ ಇರುವುದನ್ನು ನೋಡಿ, ತನ್ನ ಬಳಿಗೆ ಗುಂಪುಗುಂಪಾಗಿ ಕೂಡಿಬಂದು, ಜುದೇಯ ನಾಡಿನಲ್ಲಿ ನೆಲಸಿದ್ದ ಎಫ್ರಯಿಮ್, ಮನಸ್ಸೆ ಹಾಗೂ ಸಿಮೆಯೋನ್ ಕುಲಗಳವರನ್ನು ಸಹ ಕರೆಸಿಕೊಂಡನು.</verse>
				<verse number="10">ಅವರು ಆಸನ ಆಳ್ವಿಕೆಯ ಹದಿನೈದನೆಯ ವರ್ಷದ ಮೂರನೆಯ ತಿಂಗಳಿನಲ್ಲಿ ಜೆರುಸಲೇಮಿನಲ್ಲಿ ಕೂಡಿಬಂದರು.</verse>
				<verse number="11">ತಾವು ತಂದ ಕೊಳ್ಳೆಯಿಂದ ಏಳು ನೂರು ಹೋರಿಗಳನ್ನೂ ಏಳು ಸಾವಿರ ಕುರಿಗಳನ್ನೂ ಸರ್ವೇಶ್ವರನಿಗೆ ಆ ದಿನ ಬಲಿದಾನ ಮಾಡಿದರು.</verse>
				<verse number="12">ಇದಲ್ಲದೆ, ಅವರು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನಿಗೆ ಭಕ್ತರಾಗಿರುವೆವೆಂದು ಪ್ರಮಾಣಮಾಡಿದರು.</verse>
				<verse number="13">ಇದಲ್ಲದೆ, “ತಮ್ಮಲ್ಲಿ ಇಸ್ರಯೇಲ್ ದೇವರಾದ ಸರ್ವೇಶ್ವರನ ಭಕ್ತಿಯನ್ನು ತೊರೆದುಬಿಡುವವರು ಚಿಕ್ಕವರಾಗಲಿ ದೊಡ್ಡವರಾಗಲಿ, ಗಂಡಸರಾಗಲಿ ಹೆಂಗಸರಾಗಲಿ, ಅವರೆಲ್ಲರನ್ನು ಕೊಲ್ಲಲಾಗುವುದು” ಎಂದು,</verse>
				<verse number="14">ತುತ್ತೂರಿ ಕೊಂಬುಗಳನ್ನು ಊದಿಸಿ, ದೊಡ್ಡ ಘೋಷಣೆಗಳೊಡನೆ, ವಾಗ್ದಾನ ಮಾಡಿದರು.</verse>
				<verse number="15">ಈ ಪ್ರಮಾಣದ ನಿಮಿತ್ತ ಯೆಹೂದ್ಯರೆಲ್ಲರಿಗೆ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಲವಲವಿಕೆಯಿಂದ ಸರ್ವೇಶ್ವರನನ್ನು ಬಯಸಿದ ಕಾರಣ, ಸರ್ವೇಶ್ವರ ಅವರಿಗೆ ಪ್ರಸನ್ನರಾಗಿ ಎಲ್ಲಾ ಕಡೆಗಳಲ್ಲೂ ಶಾಂತಿಸಮಾಧಾನವನ್ನು ಅನುಗ್ರಹಿಸಿದರು.</verse>
				<verse number="16">ಅರಸನಾದ ಆಸನ ತಾಯಿ ಮಾಕಳು ಅಶೇರ ದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿದ್ದಳು. ಆದ್ದರಿಂದ ಅವನು ಆಕೆಯನ್ನು ‘ರಾಜಮಾತೆ’ ಎಂಬ ಪದವಿಯಿಂದ ತೆಗೆದುಹಾಕಿದನು. ಆ ಮೂರ್ತಿಯನ್ನು ತೆಗೆಸಿ ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರುಚೂರು ಮಾಡಿ ಸುಡಿಸಿದನು.</verse>
				<verse number="17">ಇಸ್ರಯೇಲ್ ಪ್ರಾಂತ್ಯದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದೆ ಇದ್ದರೂ ಆಸನು ತನ್ನ ಜೀವಮಾನದಲ್ಲೆಲ್ಲಾ ಯಥಾರ್ಥಚಿತ್ತನಾಗಿ ನಡೆದುಕೊಂಡನು.</verse>
				<verse number="18">ತಾನೂ ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು.</verse>
				<verse number="19">ಅವನ ಆಳ್ವಿಕೆಯ ಮೂವತ್ತ ಐದನೆಯ ವರ್ಷದವರೆಗೂ ಯುದ್ಧವಿರಲಿಲ್ಲ.</verse>
			</chapter>
			<chapter number="16">
				<verse number="1">ಆಸನ ಆಳ್ವಿಕೆಯ ಮೂವತ್ತಾರನೆಯ ವರ್ಷದಲ್ಲಿ ಇಸ್ರಯೇಲ್ ರಾಜ ಬಾಷನು ಯೆಹೂದ್ಯರಿಗೆ ವಿರೋಧವಾಗಿ ಹೊರಟುಬಂದನು. ಯಾರೂ ಯೆಹೂದ್ಯರ ಅರಸ ಆಸನ ಬಳಿಗೆ ಹೋಗಿಬರುವುದಕ್ಕಾಗದಂತೆ ರಾಮಕೋಟೆಯನ್ನು ಕಟ್ಟಿಸಿದನು.</verse>
				<verse number="2">ಆಗ ಆಸನು ಸರ್ವೇಶ್ವರನಾಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿದ್ದ ಸಿರಿಯಾದ ಅರಸ ಬೆನ್ಹದದನಿಗೆ ಕಳುಹಿಸಿ,</verse>
				<verse number="3">“ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಂದು ಒಪ್ಪಂದ ಇದೆಯಲ್ಲವೆ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಳುಹಿಸಿದ್ದೇನೆ; ಇಸ್ರಯೇಲರ ಅರಸ ಬಾಷನು ನನ್ನನ್ನು ಬಿಟ್ಟುಹೋಗುವಂತೆ ಮಾಡು; ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು,” ಎಂದು ಹೇಳಿಕಳುಹಿಸಿದನು.</verse>
				<verse number="4">ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ತನ್ನ ಸೈನ್ಯಾಧಿಪತಿಗಳನ್ನು ಇಸ್ರಯೇಲರ ಪಟ್ಟಣಗಳಿಗೆ ವಿರುದ್ಧ ಕಳುಹಿಸಿದನು; ಅವರು ಇಯ್ಯೋನ್, ದಾನ್, ಆಬೇಲ್ಮಯಿಮ್ ಇವುಗಳನ್ನೂ ನಫ್ತಾಲ್ಯರ ಪಟ್ಟಣಗಳ ಎಲ್ಲ ಉಗ್ರಾಣಗಳನ್ನೂ ಹಾಳುಮಾಡಿದರು.</verse>
				<verse number="5">ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆ ಕಟ್ಟಿಸುವ ಕೆಲಸವನ್ನು ನಿಲ್ಲಿಸಿಬಿಟ್ಟನು.</verse>
				<verse number="6">ಅನಂತರ ಅರಸ ಆಸನು ಎಲ್ಲಾ ಯೆಹೂದ್ಯರನ್ನು ಕರೆಸಿ ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲುಮರಗಳನ್ನು ಇವರ ಮುಖಾಂತರ ತೆಗೆದುಕೊಂಡು ಹೋಗಿ ಗೆಬ, ಮಿಚ್ಪ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.</verse>
				<verse number="7">ಆ ಕಾಲದಲ್ಲಿ ದರ್ಶಿಯಾದ ಹನಾನಿಯು ಯೆಹೂದ್ಯರ ಅರಸ ಆಸನ ಬಳಿಗೆ ಬಂದು, “ನೀವು ನಿಮ್ಮ ದೇವರಾದ ಸರ್ವೇಶ್ವರನನ್ನು ಆಶ್ರಯಿಸಿಕೊಳ್ಳದೆ ಸಿರಿಯಾದ ಅರಸನನ್ನು ಆಶ್ರಯಿಸಿಕೊಂಡದ್ದರಿಂದ ಸಿರಿಯಾ ರಾಜನ ಸೈನ್ಯವು ನಿಮ್ಮ ಕೈಗೆ ಬೀಳದಂತೆ ನುಣಿಚಿಕೊಂಡಿತು.</verse>
				<verse number="8">ಸುದಾನ್ ಹಾಗೂ ಲಿಬಿಯರ ಸೈನ್ಯ ಅಪರಿಮಿತ ರಥಾಶ್ವಬಲಗಳುಳ್ಳ ಮಹಾ ಸೈನ್ಯವಲ್ಲವೇ? ನೀವು ಸರ್ವೇಶ್ವರನನ್ನು ಆಶ್ರಯಿಸಿಕೊಂಡದ್ದರಿಂದ ಅವರು ಅದನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟರು.</verse>
				<verse number="9">ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.</verse>
				<verse number="10">ಆಸನು ಈ ಮಾತುಗಳಿಂದ ಬೇಸರಗೊಂಡು, ದರ್ಶಿಯ ಮೇಲೆ ಕುಪಿತನಾಗಿ, ಅವನನ್ನು ಸೆರೆಮನೆಯಲ್ಲಿಡಿಸಿ ಕೋಳಹಾಕಿದನು. ಇದಲ್ಲದೆ, ಜನರಲ್ಲಿ ಕೆಲವರನ್ನು ಪೀಡಿಸಿದನು.</verse>
				<verse number="11">ಆಸನ ಪೂರ್ವೋತ್ತರ ಚತರಿತ್ರೆಯನ್ನು ಯೆಹೂದ ಮತ್ತು ಇಸ್ರಯೇಲ್ ರಾಜರ ಇತಿಹಾಸ ಗ್ರಂಥದಲ್ಲಿ ಬರೆದಿರುತ್ತದೆ.</verse>
				<verse number="12">ಅವನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ಈ ರೋಗದಲ್ಲೂ ಅವನು ಸರ್ವೇಶ್ವರನ ಸಹಾಯವನ್ನು ಕೋರಲಿಲ್ಲ; ವೈದ್ಯರ ಸಹಾಯವನ್ನು ಮಾತ್ರ ಕೋರಿದನು.</verse>
				<verse number="13">ಅವನು ತನ್ನ ಆಳ್ವಿಕೆಯ ನಲವತ್ತ ಒಂದನೆಯ ವರ್ಷದಲ್ಲಿ ತೀರಿಕೊಂಡು ಪಿತೃಗಳ ಬಳಿಗೆ ಸೇರಿದನು.</verse>
				<verse number="14">ಅವನ ಶವವನ್ನು ಬುಕ್ಕಿಟ್ಟುಗಾರನ ಕಸಬಿನ ಮೇರೆಗೆ ಮಿಶ್ರಣ ಮಾಡಲ್ಪಟ್ಟ ತರತರದ ಸುಗಂಧದ್ರವ್ಯಗಳಿಂದ ತುಂಬಿರುವ ಹಾಸಿಗೆಯ ಮೇಲಿಟ್ಟು, ಅವನು ತನಗಾಗಿ ದಾವೀದನಗರದಲ್ಲಿ ತೋಡಿಸಿದ್ದ ಸಮಾಧಿಯಲ್ಲಿ ಅದನ್ನು ಇಟ್ಟರು. ಹೇರಳವಾಗಿ ಧೂಪಹಾಕಿ ಸಂತಾಪ ಸೂಚಿಸಿದರು.</verse>
			</chapter>
			<chapter number="17">
				<verse number="1">ಆಸನಿಗೆ ಅನಂತರ ಅವನ ಮಗ ಯೇಹೋಷಾಫಾಟನು ಅರಸನಾದನು. ಇಸ್ರಯೇಲರಿಂದ ಅಪಾಯವಾಗದಂತೆ ಇವನು ತನ್ನನ್ನೇ ಭದ್ರಪಡಿಸಿಕೊಂಡನು.</verse>
				<verse number="2">ಜುದೇಯದ ಕೋಟೆಕೊತ್ತಲುಗಳುಳ್ಳ ಎಲ್ಲ ಪಟ್ಟಣಗಳಲ್ಲೂ ಸೈನ್ಯವನ್ನಿರಿಸಿದನು. ಜುದೇಯ ನಾಡಿನಲ್ಲೂ ಹಾಗೂ ತನ್ನ ತಂದೆ ಆಸನು ಕಿತ್ತುಕೊಂಡಿದ್ದ ಎಫ್ರಯಿಮರ ಪಟ್ಟಣಗಳಲ್ಲೂ ಅಧಿಕಾರಿಗಳನ್ನು ನೇಮಿಸಿದನು.</verse>
				<verse number="3">ಬಾಳ್‍ದೇವರುಗಳನ್ನು ಅವಲಂಬಿಸದೆ, ತನ್ನ ಪೂರ್ವಿಕನಾದ ದಾವೀದನ ಮೊದಲನೇ ನಡತೆಯ ಪ್ರಕಾರ ಇವನು ನಡೆಯುತ್ತಿದ್ದುದರಿಂದ ಸರ್ವೇಶ್ವರ ಇವನ ಸಂಗಡ ಇದ್ದರು.</verse>
				<verse number="4">ಇವನು ಇಸ್ರಯೇಲರಂತೆ ನಡೆಯದೆ, ತನ್ನ ಪಿತೃವಿನ ದೇವರಲ್ಲಿ ಭಕ್ತಿಯಿಟ್ಟು ಅವರ ಆಜ್ಞೆಗಳನ್ನು ಅನುಸರಿಸಿದನು.</verse>
				<verse number="5">ಆದುದರಿಂದ ಸರ್ವೇಶ್ವರ ಇವನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿದರು; ಯೆಹೂದ್ಯರೆಲ್ಲರೂ ಯೆಹೋಷಾಫಾಟನಿಗೆ ಕಾಣಿಕೆ ಕೊಡುತ್ತಿದ್ದುದರಿಂದ ಇವನ ಧನಘನತೆಗಳು ಹೆಚ್ಚಾದವು.</verse>
				<verse number="6">ಇವನು ಸರ್ವೇಶ್ವರನ ಮಾರ್ಗದಲ್ಲಿ ನಡೆದು, ಧೈರ್ಯದಿಂದ ಜುದೇಯ ನಾಡಿನಲ್ಲಿದ್ದ ಪೂಜಾಸ್ಥಳಗಳನ್ನೂ ಆಶೇರ ವಿಗ್ರಹಸ್ತಂಭಗಳನ್ನೂ ತೆಗೆದುಹಾಕಿಸಿದನು.</verse>
				<verse number="7">ಇವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಸರದಾರರಾದ ಬೆನ್ಹೈಲ್, ಓಬದ್ಯ, ಜೆಕರ್ಯ, ನೆತನೇಲ್, ಮೀಕಾಯ ಇವರನ್ನೂ</verse>
				<verse number="8">ಇವರ ಜೊತೆಯಲ್ಲಿ ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ, ಟೋಬೀಯ, ಟೋಬದೋನೀಯ ಎಂಬ ಲೇವಿಯರನ್ನೂ ಎಲೀಷಾಮಾ, ಯೆಹೋರಾಮ್ ಎಂಬ ಯಾಜಕರನ್ನೂ ಧರ್ಮೋಪದೇಶ ಮಾಡುವುದಕ್ಕಾಗಿ ಜುದೇಯ ನಾಡಿನ ಪಟ್ಟಣಗಳಿಗೆ ಕಳುಹಿಸಿದನು.</verse>
				<verse number="9">ಇವರು ಸರ್ವೇಶ್ವರನ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಜುದೇಯ ನಾಡಿನಲ್ಲೆಲ್ಲಾ ಸಂಚಾರಮಾಡಿ ಜನರಿಗೆ ಬೋಧಿಸಿದರು.</verse>
				<verse number="10">ಜುದೇಯದ ಸುತ್ತಲಿನ ದೇಶಗಳ ರಾಜ್ಯಗಳವರೆಗೆ ಸರ್ವೇಶ್ವರನ ಭಯವಿತ್ತು. ಆದುದರಿಂದ ಅವರು ಯೆಹೋಷಾಫಾಟನೊಡನೆ ಯುದ್ಧಕ್ಕೆ ಬರಲಿಲ್ಲ.</verse>
				<verse number="11">ಫಿಲಿಷ್ಟಿಯರಲ್ಲಿ ಕೆಲವರು ಯೆಹೋಷಾಫಾಟನಿಗೆ ಕಾಣಿಕೆಯನ್ನೂ ಕಪ್ಪವನ್ನಾಗಿ ಬೆಳ್ಳಿಯನ್ನೂ ತಂದುಕೊಡುತ್ತಿದ್ದರು. ಅರೇಬಿಯರು ತಮ್ಮ ಪಶುಪ್ರಾಣಿಗಳಲ್ಲಿ ಏಳು ಸಾವಿರದ ಏಳುನೂರು ಟಗರುಗಳನ್ನೂ ಏಳು ಸಾವಿರದ ಏಳುನೂರು ಹೋತಗಳನ್ನೂ ಕೊಡುತ್ತಿದ್ದರು.</verse>
				<verse number="12">ಹೀಗೆ ಯೆಹೋಷಾಫಾಟನು ಅತ್ಯಧಿಕವಾಗಿ ಅಭಿವೃದ್ಧಿಹೊಂದಿ ಜುದೇಯ ನಾಡಿನಲ್ಲಿ ಕೋಟೆಗಳನ್ನು ಮತ್ತು ಉಗ್ರಾಣದ ಪಟ್ಟಣಗಳನ್ನು ಕಟ್ಟಿಸಿದನು.</verse>
				<verse number="13">ಜುದೇಯದ ಪಟ್ಟಣಗಳಲ್ಲಿ ದವಸಧಾನ್ಯಗಳ ದೊಡ್ಡ ಮಳಿಗೆಯಿತ್ತು. ಜೆರುಸಲೇಮಿನಲ್ಲಿ ರಣವೀರರಾದ ಯೋಧರು ಇದ್ದರು:</verse>
				<verse number="14">ಗೋತ್ರಗಳ ಪ್ರಕಾರ ಲೆಕ್ಕಿತರಾದ ಈ ಸೇನಾನಾಯಕರ ಕ್ರಮಬದ್ಧ ಪಟ್ಟಿಯಿದು; ಅದ್ನ - ಇವನು ಯೆಹೂದ್ಯರಲ್ಲಿ ಮೂರು ಲಕ್ಷಮಂದಿ ರಣವೀರರ ಅಧಿಪತಿ;</verse>
				<verse number="15">ಯೆಹೋಹಾನಾನ್ - ಇವನು ಎರಡು ಲಕ್ಷದ ಎಂಬತ್ತು ಸಾವಿರ ಮಂದಿ ರಣವೀರರ ಅಧಿಪತಿ;</verse>
				<verse number="16">ಅಮಸ್ಯ - ಜಿಕ್ರಿಯ ಮಗನಾದ ಇವನು ಎರಡು ಲಕ್ಷ ಮಂದಿ ರಣವೀರರೊಡನೆ ಸ್ವೇಚ್ಛೆಯಿಂದ ತನ್ನನ್ನೇ ಸರ್ವೇಶ್ವರನಿಗೆ ಪ್ರತಿಷ್ಠಿಸಿಕೊಂಡಿದ್ದನು;</verse>
				<verse number="17">ಎಲ್ಯಾದ - ಇವನು ಬೆನ್ಯಾಮೀನರಲ್ಲಿ ಬಿಲ್ಲುಗುರಾಣಿಗಳನ್ನು ಹಿಡಿದುಕೊಂಡ ಎರಡು ಲಕ್ಷ ಸೈನಿಕರ ನಾಯಕ ಹಾಗೂ ರಣವೀರ;</verse>
				<verse number="18">ಯೆಹೋಜಾಬಾದ್ - ಇವನು ಒಂದು ಲಕ್ಷ ಎಂಬತ್ತು ಸಾವಿರ ಮಂದಿ ಯುದ್ಧಸನ್ನದ್ಧರ ನಾಯಕ.</verse>
				<verse number="19">ಅರಸನಿಗೆ ತನ್ನ ಸನ್ನಿಧಿಯಲ್ಲಿ ಸೇವೆಮಾಡುತ್ತಿದ್ದ ಈ ಯೋಧರಲ್ಲದೆ ಕೋಟೆಕೊತ್ತಲಗಳಿದ್ದ ಬೇರೆ ಪಟ್ಟಣಗಳಲ್ಲಿಯೂ ಸೈನಿಕರಾಗಿ ಇದ್ದರು.</verse>
			</chapter>
			<chapter number="18">
				<verse number="1">ಯೆಹೋಷಾಫಾಟನಿಗೆ ಧನಘನತೆ ಬಹಳವಾಗಿತ್ತು. ಅವನು ಆಹಾಬನೊಡನೆ ಬೀಗತನಮಾಡಿ ಕೆಲವು ವರ್ಷಗಳಾದ ನಂತರ ಅವನ ಬಳಿಗೆ ಸಮಾರಿಯಕ್ಕೆ ಹೋದನು.</verse>
				<verse number="2">ಆಹಾಬನು ಅವನಿಗೂ ಅವನೊಡನೆ ಬಂದ ಜನರಿಗೂ ಅನೇಕಾನೇಕ ದನಕುರಿಗಳನ್ನು ವಧಿಸಿ ಔತಣವನ್ನೇರ್ಪಡಿಸಿದನು. ರಾಮೋತ್ ಗಿಲ್ಯಾದಿಗೆ ಮುತ್ತಿಗೆ ಹಾಕಲು ತನ್ನ ಸಂಗಡ ಬರಬೇಕೆಂದು ಅವನನ್ನು ಪ್ರೇರಿಸಿದನು.</verse>
				<verse number="3">ಇಸ್ರಯೇಲರ ಅರಸ ಆಹಾಬನು ಯೆಹೂದ್ಯರ ಅರಸ ಯೆಹೋಷಾಫಾಟನನ್ನು, “ನನ್ನ ಜೊತೆಯಲ್ಲಿ ರಾಮೋತ್‍ಗಿಲ್ಯಾದಿಗೆ ಬರುತ್ತೀಯಾ?” ಎಂದು ಕೇಳಿದನು. ಅವನು, “ನಾನೂ ನೀನೂ ನನ್ನ ಜನರೂ ನಿನ್ನ ಜನರೂ ಒಂದೆ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಖಂಡಿತ ಬರುತ್ತೇನೆ,” ಎಂದು ಉತ್ತರಕೊಟ್ಟನು.</verse>
				<verse number="4">ಅನಂತರ, “ಸರ್ವೇಶ್ವರನ ಸನ್ನಿಧಿಯಲ್ಲಿ ಈ ಬಗ್ಗೆ ವಿಚಾರಿಸು,” ಎಂದು ಇಸ್ರಯೇಲರ ಅರಸನನ್ನು ಕೇಳಿಕೊಂಡನು.</verse>
				<verse number="5">ಆಗ ಇಸ್ರಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಸೇರಿಸಿ, “ನಾವು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?\, ಎಂದು ಕೇಳಿದನು. ಅವರು, “ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವರು,” ಎಂದರು.</verse>
				<verse number="6">ಆದರೆ ಯೆಹೋಷಾಫಾಟನು ಇಸ್ರಯೇಲರ ಅರಸನನ್ನು, “ಸರ್ವೇಶ್ವರನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿ ಇಲ್ಲವೇ?” ಎಂದು ಕೇಳಿದನು. ಅವನು,</verse>
				<verse number="7">“ನಮಗಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿ ಇರುತ್ತಾನೆ; ಅವನು ಇಮ್ಲನ ಮಗನಾದ ಮೀಕಾಯೆಹು ಎಂಬವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆ,” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸರು ಹಾಗೆನ್ನಬಾರದು,” ಎಂದನು.</verse>
				<verse number="8">ಆಗ ಇಸ್ರಯೇಲರ ಅರಸನು ಒಬ್ಬ ಕಂಚುಕಿಯನ್ನು ಕರೆದು, “ಬೇಗ ಹೋಗಿ ಇಮ್ಲನ ಮಗ ಮೀಕಾಯೆಹುವನ್ನು ಕರೆದುಕೊಂಡು ಬಾ,” ಎಂದು ಆಜ್ಞಾಪಿಸಿದನು.</verse>
				<verse number="9">ಇಸ್ರಯೇಲರ ಅರಸನೂ ಯೆಹೂದ್ಯರ ಅರಸ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರಿಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡರು; ಎಲ್ಲ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತಾಡತೊಡಗಿದರು.</verse>
				<verse number="10">ಅವರಲ್ಲಿ ಕೆನಾನನ ಮಗ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀವು ಸಿರಿಯಾದವರನ್ನು ಇರಿದು ಕೊಂದುಹಾಕುವಿರಿ, ಎಂಬುದಾಗಿ ಸರ್ವೇಶ್ವರ ಹೇಳುತ್ತಾರೆ,” ಎಂದನು.</verse>
				<verse number="11">ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್‍ಗಿಲ್ಯಾದಿಗೆ ಹೋಗಿ, ನೀವು ಕೃತಾರ್ಥರಾಗಿ ಬರುವಿರಿ; ಸರ್ವೇಶ್ವರ ಅದನ್ನು ಅರಸರ ಕೈಗೆ ಒಪ್ಪಿಸುವರು,” ಎಂದರು.</verse>
				<verse number="12">ಇತ್ತ ಮೀಕಾಯೆಹುವನ್ನು ಕರೆಯಲು ಬಂದಿದ್ದ ದೂತನು, “ನೋಡಿ ಎಲ್ಲ ಪ್ರವಾದಿಗಳು ಏಕ ಮನಸ್ಸಿನಿಂದ ಅರಸರಿಗೆ ಶುಭವನ್ನೇ ಮುಂತಿಳಿಸುತ್ತಿರುತ್ತಾರೆ. ದಯವಿಟ್ಟು ನೀವೂ ಅವರಂತೆ ಶುಭವನ್ನೇ ಮುಂತಿಳಿಸಿ,” ಎಂದು ಹೇಳಿದನು.</verse>
				<verse number="13">ಅದಕ್ಕೆ ಮೀಕಾಯೆಹುವು, “ಸರ್ವೇಶ್ವರನಾಣೆ, ನನ್ನ ದೇವರು ಹೇಳುವುದನ್ನು ಮಾತ್ರ ನುಡಿಯುತ್ತೇನೆ,” ಎಂದು ಉತ್ತರಕೊಟ್ಟನು.</verse>
				<verse number="14">ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ, ನಾವು ರಾಮೋತ್‍ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಬಾರದೋ?” ಎಂದು ಕೇಳಿದನು. ಅವನು “ಹೋಗಬಹುದು, ಕೃತಾರ್ಥರಾಗಿ ಬರುವಿರಿ; ವೈರಿಗಳು ನಿಮ್ಮ ಕೈವಶವಾಗುವರು,” ಎಂದು ಹೇಳಿದನು.</verse>
				<verse number="15">ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಸರ್ವೇಶ್ವರನ ಹೆಸರಿನಲ್ಲಿ ನಾನು ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು.</verse>
				<verse number="16">ಆಗ ಅವನು, “ಇಸ್ರಯೇಲರೆಲ್ಲರೂ ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದರಿಹೋದದ್ದನ್ನು ಕಂಡೆ; ಆಗ ಸರ್ವೇಶ್ವರ ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಯೊಳಗೆ ಹೋಗಲಿ ಎಂದರು,” ಎಂಬುದಾಗಿ ಉತ್ತರ ಕೊಟ್ಟನು.</verse>
				<verse number="17">ಆಗ ಇಸ್ರಯೇಲರ ಅರಸು ಯೆಹೋಷಾಫಾಟನಿಗೆ, “ಇವನು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೇ?” ಎಂದನು.</verse>
				<verse number="18">ಅದಕ್ಕೆ ಮೀಕಾಯೆಹುವು, “ಅದಿರಲಿ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ; ಸರ್ವೇಶ್ವರ ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಅವರ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆ.</verse>
				<verse number="19">ಸರ್ವೇಶ್ವರ ತಮ್ಮ ಹತ್ತಿರ ನಿಂತವರನ್ನು, ‘ಇಸ್ರಯೇಲರ ಅರಸ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್‍ಗಿಲ್ಯಾದಿನ ಯುದ್ಧಕ್ಕೆ ಯಾರು ಪ್ರೇರೇಪಿಸಬಲ್ಲಿರಿ?’ ಎಂದು ಕೇಳಿದಾಗ ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು.</verse>
				<verse number="20">ಕಡೆಗೆ ಒಂದು ಆತ್ಮ ಸರ್ವೇಶ್ವರನ ಮುಂದೆ ಬಂದು ನಿಂತು, ‘ನಾನು ಹೋಗಿ ಅವನನ್ನು ಪ್ರೇರೇಪಿಸುವೆನು’ ಎಂದಿತು. ‘ಹೇಗೆ ಪ್ರೇರೇಪಿಸುವೆ?’ ಎಂದು ಸರ್ವೇಶ್ವರ ಕೇಳಿದರು. ಅದು,</verse>
				<verse number="21">‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲ ಪ್ರವಾದಿಗಳಲ್ಲಿ ಸೇರುವೆನು’, ಎಂದು ಉತ್ತರಕೊಟ್ಟಿತು. ಆಗ ಸರ್ವೇಶ್ವರ ಅದಕ್ಕೆ, ‘ಹೋಗಿ ಅದರಂತೆಯೇ ಮಾಡು; ಅವನನ್ನು ಪ್ರೇರೇಪಿಸಿ ಸಫಲನಾಗುವೆ’, ಎಂದರು.</verse>
				<verse number="22">ನೋಡು, ಸರ್ವೇಶ್ವರ ನಿನ್ನ ವಿಷಯದಲ್ಲಿ ಕೇಡು ನುಡಿದು, ನಿನ್ನ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನೇ ಕಳುಹಿಸಿದ್ದಾರೆ,” ಎಂದು ಹೇಳಿದನು.</verse>
				<verse number="23">ಆಗ ಕೆನಾನನ ಮಗ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಬಂದು ಅವನ ಕೆನ್ನೆಗೆ ಒಂದು ಪೆಟ್ಟುಕೊಟ್ಟು, “ಸರ್ವೇಶ್ವರನ ಆತ್ಮ ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವುದಕ್ಕೆ ಯಾವ ಮಾರ್ಗವಾಗಿ ಬಂದಿತು?” ಎಂದನು. ಮೀಕಾಯೆಹುವು,</verse>
				<verse number="24">“ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು,” ಎಂದು ಉತ್ತರಕೊಟ್ಟನು.</verse>
				<verse number="25">ಆಗ ಇಸ್ರಯೇಲರ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ; ಅವರಿಗೆ,</verse>
				<verse number="26">‘ನಾನು, ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸರು ಹೇಳಿದ್ದಾರೆ’ ಎಂದು ತಿಳಿಸಿರಿ,” ಎಂದು ಆಜ್ಞಾಪಿಸಿದನು.</verse>
				<verse number="27">ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತವಾಗಿ ಬರುವುದಾದರೆ, ನಾನು ನುಡಿದದ್ದು ಸರ್ವೇಶ್ವರನ ಮಾತಲ್ಲ,” ಎಂದು ಹೇಳಿ, “ಮಹಾಜನರೇ, ನನ್ನ ಮಾತನ್ನು ಗಮನದಲ್ಲಿಡಿ,” ಎಂದು ಕೂಗಿದನು.</verse>
				<verse number="28">ಇಸ್ರಯೇಲರ ಅರಸನು ಹಾಗೂ ಯೆಹೂದ್ಯರ ಅರಸ ಯೆಹೋಷಾಫಾಟನೂ ರಾಮೋತ್‍ಗಿಲ್ಯಾದಿಗೆ ವಿರುದ್ಧ ಯುದ್ಧಕ್ಕೆ ಹೊರಟರು.</verse>
				<verse number="29">ಇಸ್ರಯೇಲರ ಅರಸನು ಯೆಹೋಷಾಫಾಟನಿಗೆ, ‘ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುತ್ತೇನೆ; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ,” ಎಂದು ಹೇಳಿ ವೇಷಹಾಕಿಕೊಂಡನು; ತರುವಾಯ ರಣರಂಗಕ್ಕೆ ಹೋದರು.</verse>
				<verse number="30">ಸಿರಿಯಾದವರ ಅರಸನು ತನ್ನ ರಥಬಲದ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಯೇಲರ ಅರಸನಿಗೇ ಗುರಿಯಿಡಿ\, ಎಂದು ಆಜ್ಞಾಪಿಸಿದನು.</verse>
				<verse number="31">ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಯೇಲರ ಅರಸನೆಂದು ನೆನಸಿ, ಅವನಿಗೆ ವಿರುದ್ಧ ಯುದ್ಧಮಾಡುವುದಕ್ಕೆ ಅವನನ್ನು ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಂಡನು. ಆಗ ದೇವರಾದ ಸರ್ವೇಶ್ವರ ಅವನಿಗೆ ನೆರವಾಗಿ, ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದರು.</verse>
				<verse number="32">ಅವನು ಇಸ್ರಯೇಲರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂದಿರುಗಿದರು.</verse>
				<verse number="33">ಸಿರಿಯಾದವರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆದನು. ಆ ಬಾಣ ಇಸ್ರಯೇಲರ ಅರಸನಿಗೆ, ಅವನ ಕವಚದ ಸಂದಿನಲ್ಲಿ ತಾಕಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿ ಇದೆ,” ಎಂದು ಹೇಳಿದನು.</verse>
				<verse number="34">ಆ ದಿವಸ ಯುದ್ಧ ಬಹುಘೋರವಾಗಿತ್ತು. ಆದ್ದರಿಂದ ಇಸ್ರಯೇಲರ ಅರಸನು ಸಾಯಂಕಾಲದವರೆಗೂ ಸಿರಿಯಾದವರ ಎದುರಿಗೆ ತನ್ನ ರಥದಲ್ಲೇ ಆತುಕೊಂಡಿರಬೇಕಾಯಿತು.ಸೂರ್ಯಾಸ್ತಮಾನವಾದಾಗ ಅವನು ಸತ್ತನು.</verse>
			</chapter>
			<chapter number="19">
				<verse number="1">ಜುದೇಯದ ಅರಸ ಯೆಹೋಷಾಫಾಟನು ಸುರಕ್ಷಿತವಾಗಿ ತನ್ನ ಮನೆಗೆ ಹಿಂದಿರುಗಿದನು.</verse>
				<verse number="2">ಅವನು ಜೆರುಸಲೇಮಿಗೆ ಬಂದಾಗ ಹನಾನೀಯನ ಮಗ ಯೇಹೂ ಎಂಬ ದರ್ಶಿಯು ಅವನನ್ನು ಎದುರುಗೊಂಡು, “ನೀವು ಕೆಟ್ಟವನಿಗೆ ಸಹಾಯಮಾಡಬಹುದೇ? ಸರ್ವೇಶ್ವರನ ಹಗೆಗಾರರನ್ನು ಪ್ರೀತಿಸಬಹುದೇ? ನೀವು ಹೀಗೆ ಮಾಡಿದ್ದರಿಂದ ಸರ್ವೇಶ್ವರನ ಕೋಪ ನಿಮ್ಮ ಮೇಲಿರುತ್ತದೆ.</verse>
				<verse number="3">ಆದರೂ ನೀವು ನಾಡಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದುಹಾಕಿದ್ದೀರಿ. ಸರ್ವೇಶ್ವರನ ಭಕ್ತಿ ನಿಮ್ಮಲ್ಲಿ ಬೇರೂರಿದೆ, ನಿಮ್ಮಲ್ಲಿ ಸುಶೀಲತೆ ಉಂಟೆಂದು ತಿಳಿದುಬಂದಿದೆ,” ಎಂಬುದಾಗಿ ಹೇಳಿದನು.</verse>
				<verse number="4">ಯೆಹೋಷಾಫಾಟನು ಜೆರುಸಲೇಮಿನಲ್ಲಿ ವಾಸವಾಗಿದ್ದು, ಇನ್ನೊಮ್ಮೆ ಬೇರ್ಷೆಬದಿಂದ ಎಫ್ರಯಿಮ್ ಪರ್ವತದವರೆಗೂ ಸಂಚರಿಸಿ, ತನ್ನ ಪ್ರಜೆಗಳನ್ನು ಅವರ ಪೂರ್ವಜರ ದೇವರಾದ ಸರ್ವೇಶ್ವರನ ಕಡೆಗೆ ತಿರುಗಿಸಿದನು.</verse>
				<verse number="5">ಜುದೇಯ ನಾಡಿನ ಪ್ರತಿಯೊಂದು ಕೋಟೆಕೊತ್ತಲಗಳುಳ್ಳ ಪಟ್ಟಣದಲ್ಲಿ ನ್ಯಾಯಾಧಿಪತಿಗಳನ್ನು ನೇಮಿಸಿದನು.</verse>
				<verse number="6">ಅವರಿಗೆ, “ನೀವು ಹೇಗೆ ಕಾರ್ಯನಿರ್ವಹಿಸುತ್ತೀರಿ ಎಂಬುದರ ಬಗ್ಗೆ, ಎಚ್ಚರಿಕೆ! ನೀವು ನ್ಯಾಯ ನಿರ್ಣಯಿಸುವುದು ಮನುಷ್ಯರಿಗಾಗಿ ಅಲ್ಲ; ಸರ್ವೇಶ್ವರನಿಗಾಗಿ, ನ್ಯಾಯವಿಚಾರಣೆ ನಡೆಯುವಾಗ ಸರ್ವೇಶ್ವರ ನಿಮ್ಮ ಮಧ್ಯೆ ಇರುತ್ತಾರೆ.</verse>
				<verse number="7">ಹೀಗಿರುವಲ್ಲಿ, ನಿಮಗೆ ಅವರ ಭಯಭಕ್ತಿಯಿರಲಿ. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಅನ್ಯಾಯ, ಮುಖದಾಕ್ಷಿಣ್ಯ ಹಾಗು ಲಂಚಕೋರತನ ಇಲ್ಲ. ಆದುದರಿಂದ ಜಾಗರೂಕತೆಯಿಂದ ಕೆಲಸಮಾಡಿ,” ಎಂದು ಎಚ್ಚರಿಸಿದನು.</verse>
				<verse number="8">ಇದಲ್ಲದೆ ಯೆಹೋಷಾಫಾಟನು ತನ್ನ ಪರಿವಾರದೊಡನೆ ಜೆರುಸಲೇಮಿಗೆ ಹಿಂದಿರುಗಿ ಬಂದು, ಲೇವಿಯರಿಂದ, ಯಾಜಕರ ಹಾಗು ಇಸ್ರಯೇಲ್ ಗೋತ್ರಪ್ರಧಾನರಿಂದ ಕೆಲವರನ್ನು ಆರಿಸಿ, ಸರ್ವೇಶ್ವರನ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವ್ಯಾಜ್ಯಗಳನ್ನೂ ಬೇರೆ ವ್ಯಾಜ್ಯಗಳನ್ನೂ ವಿಚಾರಿಸಿ ತೀರ್ಪುನೀಡಲು ಜೆರುಸಲೇಮಿನಲ್ಲೇ ಇರಿಸಿದನು. ಅವರಿಗೆ,</verse>
				<verse number="9">“ನೀವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಾಗಿ ನಂಬಿಕೆಯಿಂದಲೂ ಯಥಾರ್ಥ ಮನಸ್ಸಿನಿಂದಲೂ ಕಾರ್ಯನಿರ್ವಹಿಸತಕ್ಕದ್ದು.</verse>
				<verse number="10">ಜುದೇಯದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರಲ್ಲಿ ಜೀವಹತ್ಯ ಸಂಬಂಧದಲ್ಲಿಯಾಗಲಿ ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ, ಅದು ನಿಮ್ಮ ಮುಂದೆ ವಿಚಾರಣೆಗೆ ಬಂದರೆ, ನಿಮ್ಮ ಸಹೋದರರು ಸರ್ವೇಶ್ವರನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆ ಹಾಗೂ ನೀವು ಅವರೊಂದಿಗೆ ದೇವಕೋಪಕ್ಕೆ ಗುರಿಯಾಗದಂತೆ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವುದಾದರೆ ನೀವು ನಿರ್ದೋಷಿಗಳಾಗುವಿರಿ.</verse>
				<verse number="11">ಇಗೋ, ಸರ್ವೇಶ್ವರನ ಕಾರ್ಯಸಂಬಂಧವಾದ ಎಲ್ಲ ವಿಚಾರಣೆಗಳಿಗೂ ಮಹಾಯಾಜಕ ಅಮರ್ಯನು ನಿಮ್ಮ ಅಧ್ಯಕ್ಷನು; ರಾಜಕೀಯ ಕಾರ್ಯಗಳ ಸಂಬಂಧವಾದ ಎಲ್ಲ ವಿಚಾರಣೆಗಳಿಗೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಲೇಖಕರು. ಧೈರ್ಯದಿಂದ ಕೆಲಸಮಾಡಿ. ಸರ್ವೇಶ್ವರಸ್ವಾಮಿ ಸಜ್ಜನರ ಸಹಾಯಕರು,” ಎಂದು ಹೇಳಿದನು.</verse>
			</chapter>
			<chapter number="20">
				<verse number="1">ಸ್ವಲ್ಪಕಾಲವಾದ ಮೇಲೆ ಮೋವಾಬ್ಯರು, ಅಮ್ಮೋನಿಯರು ಹಾಗು ಮೆಗೂನ್ಯರಲ್ಲಿ ಕೆಲವರು ಯೆಹೋಷಾಫಾಟನಿಗೆ ವಿರುದ್ಧ ಯುದ್ಧಕ್ಕೆ ಬಂದರು.</verse>
				<verse number="2">ದೂತರು ಬಂದು ಯೆಹೋಷಾಫಾಟನಿಗೆ, “ಮಹಾಸೈನ್ಯ ಸಮೂಹವೊಂದು ನಿನಗೆ ವಿರೋಧವಾಗಿ ಲವಣಸಮುದ್ರದ ಆಚೆಯಲ್ಲಿರುವ ಆರಾಮ್ ಪ್ರಾಂತ್ಯದ ಕಡೆಯಿಂದ ಬಂದು ಈಗ ಏಂಗೆದಿಯೆನಿಸಿಕೊಳ್ಳುವ ಹಚೆಚೋನ್‍ತಾಮಾರಿನಲ್ಲಿ ಇರುತ್ತಾರೆ,” ಎಂದು ತಿಳಿಸಿದರು.</verse>
				<verse number="3">ಯೆಹೋಷಾಫಾಟನು ಇದನ್ನು ಕೇಳಿ ಭಯಪಟ್ಟು, ಸರ್ವೇಶ್ವರನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿದನು.</verse>
				<verse number="4">ಆಗ ಯೆಹೂದ್ಯರು ಸರ್ವೇಶ್ವರನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಕೂಡಿಬಂದರು.</verse>
				<verse number="5">ಯೆಹೂದ್ಯರೂ ಜೆರುಸಲೇಮಿನವರೂ ಸರ್ವೇಶ್ವರನ ಆಲಯದ ಹೊಸ ಪ್ರಾಕಾರದಲ್ಲಿ ಸಭೆಯಾಗಿ ನೆರೆದುಬಂದಾಗ, ಯೆಹೋಷಾಫಾಟನು ಅದರ ಮುಂದೆ ನಿಂತು,</verse>
				<verse number="6">“ಸರ್ವೇಶ್ವರಾ, ನಮ್ಮ ಪಿತೃಗಳ ದೇವರೇ, ಪರಲೋಕದಲ್ಲಿ ದೇವರಾಗಿ ಇರುವವರು ನೀವಲ್ಲವೇ? ನೀವು ಜನಾಂಗಗಳ ಎಲ್ಲ ರಾಜ್ಯಗಳನ್ನೂ ಆಳುತ್ತಿದ್ದೀರಿ. ನಿಮ್ಮ ಹಸ್ತದಲ್ಲಿ ಬಲಪರಾಕ್ರಮಗಳಿವೆ; ನಿಮ್ಮೆದುರಿನಲ್ಲಿ ಯಾರೂ ನಿಲ್ಲಲಾರರು.</verse>
				<verse number="7">ನಮ್ಮ ದೇವರಾದ ನೀವು ನಿಮ್ಮ ಪ್ರಜೆಗಳಾದ ಇಸ್ರಯೇಲರ ಎದುರಿನಿಂದ ಈ ನಾಡಿನ ನಿವಾಸಿಗಳನ್ನು ಹೊರದೂಡಿಸಿ, ಇದನ್ನು ಮಿತ್ರ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸೊತ್ತಾಗಿ ಕೊಟ್ಟಿರಲ್ಲವೆ?</verse>
				<verse number="8">ಅವರು ಈ ನಾಡಿನಲ್ಲಿ ನೆಲೆಗೊಂಡು ಇದರಲ್ಲಿ ನಿಮ್ಮ ಹೆಸರಿಗಾಗಿ ಒಂದು ಪವಿತ್ರಾಲಯವನ್ನು ಕಟ್ಟಿದರು.</verse>
				<verse number="9">ತಮ್ಮ ಮೇಲೆ ಖಡ್ಗವಿಧಿ, ಘೋರವ್ಯಾಧಿ, ಕ್ಷಾಮಡಾಮರ, ಮೊದಲಾದ ಆಪತ್ತುಗಳು ಬರುವಾಗ, ನಿಮ್ಮ ನಾಮಮಹಿಮೆ ಇರುವ ಈ ಆಲಯದ ಮುಂದೆಯೂ ನಿಮ್ಮ ಮುಂದೆಯೂ ನಿಂತು, ತಮ್ಮ ಇಕ್ಕಟ್ಟಿನಲ್ಲಿ ನಿಮಗೆ ಮೊರೆ ಇಡುವುದಾದರೆ ನೀವು ಆಲಿಸಿ ರಕ್ಷಿಸುವಿರಿ ಎಂದುಕೊಂಡರಷ್ಟೆ.</verse>
				<verse number="10">ಈ ಅಮ್ಮೋನಿಯರನ್ನು, ಮೋವಾಬ್ಯರನ್ನು ಹಾಗೂ ಸೇಯಿರ ಪರ್ವತಪ್ರದೇಶದವರನ್ನು ನೋಡಿರಿ; ಇಸ್ರಯೇಲರು ಈಜಿಪ್ಟ್ ದೇಶದಿಂದ ಬರುತ್ತಿದ್ದಾಗ, ಇವರ ದೇಶದಲ್ಲಿ ನುಗ್ಗಬಾರದೆಂದು ನಿಮ್ಮಿಂದ ಅಪ್ಪಣೆ ಹೊಂದಿ, ಇವರನ್ನು ಸಂಹರಿಸದೆ ಬೇರೆ ಮಾರ್ಗವಾಗಿ ಹೋದರಲ್ಲವೆ?”</verse>
				<verse number="11">ಈಗ ಅವರು ಉಪಕಾರಕ್ಕೆ ಅಪಕಾರಮಾಡಿ, ನೀವು ನಮಗೆ ಅನುಗ್ರಹಿಸಿದ ಸೊತ್ತಿನಿಂದ ನಮ್ಮನ್ನು ಹೊರತಳ್ಳುವುದಕ್ಕಾಗಿ, ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ.</verse>
				<verse number="12">ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿರೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂದೂ ತಿಳಿಯದು; ನಮ್ಮ ಕಣ್ಣುಗಳು ನಿಮ್ಮನ್ನೇ ನೋಡುತ್ತಿವೆ,” ಎಂದು ಪ್ರಾರ್ಥಿಸಿದನು.</verse>
				<verse number="13">ಎಲ್ಲ ಯೆಹೂದ್ಯರೂ ಅವರ ಮಡದಿಮಕ್ಕಳೂ ಸರ್ವೇಶ್ವರನ ಸನ್ನಿಧಿಯಲ್ಲಿ ನಿಂತಿದ್ದರು.</verse>
				<verse number="14">ಆಗ ಆ ಸಮೂಹದೊಳಗೆ ಆಸಾಫನ ವಂಶದವನೂ ಲೇವಿಯನೂ ಆದ ಯಹಜೀಯೇಲನ ಮೇಲೆ ಸರ್ವೇಶ್ವರನ ಆತ್ಮ ಇಳಿದು ಬಂದಿತು. ಇವನು ಮತ್ತನ್ಯನಿಗೆ ಹುಟ್ಟಿದ ಯೆಗೀಯೇಲನ ಮರಿಮಗ, ಬೆನಾಯನ ಮೊಮ್ಮಗ, ಹಾಗೂ ಜೆಕರ್ಯನ ಮಗ.</verse>
				<verse number="15">ಅವನು, “ಜುದೇಯದ ಹಾಗು ಜೆರುಸಲೇಮಿನ ಎಲ್ಲ ಜನರೇ, ಅರಸ ಯೆಹೋಷಾಫಾಟನೇ, ಸರ್ವೇಶ್ವರ ಸ್ವಾಮಿ ಹೇಳುವುದನ್ನು ಕೇಳಿರಿ: ಈ ಮಹಾಸೈನ್ಯಸಮೂಹದ ನಿಮಿತ್ತ ಕಳವಳಗೊಳ್ಳಬೇಡಿ; ಹೆದರಬೇಡಿ. ಈ ಯುದ್ಧ ನಿಮ್ಮದಲ್ಲ, ದೇವರದೇ.</verse>
				<verse number="16">ನಾಳೆ ಬೆಳಿಗ್ಗೆ ಅವರಿಗೆ ವಿರೋಧವಾಗಿ ಹೊರಡಿರಿ; ಇಗೋ ಅವರು ಹಚ್ಚೀಚ್‍ಗಟ್ಟದ ಮಾರ್ಗವಾಗಿ ಬರುತ್ತಾರೆ. ಯೆರುವೇಲ್ ಮರುಭೂಮಿಯ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ.</verse>
				<verse number="17">ಈ ಸಾರಿ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಜೆರುಸಲೇಮಿನವರೇ, ಸುಮ್ಮನೆ ನಿಂತುಕೊಂಡು ಸರ್ವೇಶ್ವರ ನಿಮಗಾಗಿ ನಡೆಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿ, ಕಳವಳಗೊಳ್ಳಬೇಡಿ. ನಾಳೆ ಅವರೆದುರಿಗೆ ಹೊರಡಿರಿ; ಸರ್ವೇಶ್ವರ ನಿಮ್ಮೊಂದಿಗೆ ಇರುವರು!” ಎಂದು ಹೇಳಿದನು.</verse>
				<verse number="18">ಆಗ ಯೆಹೋಷಾಫಾಟನು ನೆಲದ ಮಟ್ಟಿಗೂ ತಲೆಬಾಗಿದನು. ಎಲ್ಲಾ ಯೆಹೂದ್ಯರೂ ಜೆರುಸಲೇಮಿನವರೂ ಸರ್ವೇಶ್ವರನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.</verse>
				<verse number="19">ಆಮೇಲೆ ಲೇವಿಯರಲ್ಲಿ ಕೆಹಾತ್ಯರೂ ಕೋರಹಿಯರೂ ಎದ್ದು, ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಮಹಾಸ್ವರದಿಂದ ಕೀರ್ತಿಸಿದರು.</verse>
				<verse number="20">ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಮರುಭೂಮಿಗೆ ಹೊರಟರು. ಹೊರಡುವಾಗ ಯೆಹೋಷಾಫಾಟನು ಎದ್ದು ನಿಂತು, “ಯೆಹೂದ್ಯರೇ, ಜೆರುಸಲೇಮಿನವರೇ, ನನ್ನ ಮಾತನ್ನು ಕೇಳಿರಿ; ಸರ್ವೇಶ್ವರನಲ್ಲಿ ಭರವಸೆ ಇಡಿ, ಆಗ ಸುರಕ್ಷಿತರಾಗುವಿರಿ; ಸರ್ವೇಶ್ವರನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ,” ಎಂದು ಹೇಳಿದನು.</verse>
				<verse number="21">ಆಮೇಲೆ ಜನರ ಸಮ್ಮತಿಯಿಂದ ಸರ್ವೇಶ್ವರನಿಗಾಗಿ ಗಾಯನಮಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡನು. ಅವರಿಗೆ, “ಪರಿಶುದ್ಧತ್ವವೆಂಬ ಭೂಷಣದೊಡನೆ ಯೋಧರ ಮುಂದೆ ಹೋಗುತ್ತಾ, “ಸರ್ವೇಶ್ವರನಿಗೆ ಕೃತಜ್ಞತಾ ಸ್ತುತಿಮಾಡಿರಿ, ಅವರ ಅಚಲಪ್ರೀತಿ ಶಾಶ್ವತ’ ಎಂದು ಭಜಿಸಿರಿ,” ಎಂಬುದಾಗಿ ಆಜ್ಞಾಪಿಸಿದನು.</verse>
				<verse number="22">ಅವರು ಉತ್ಸಾಹಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಸರ್ವೇಶ್ವರ ಯೆಹೂದ್ಯರಿಗೆ ವಿರುದ್ಧ ಬಂದ ಅಮ್ಮೋನಿಯರನ್ನೂ ಮೋವಾಬ್ಯರನ್ನೂ ಸೇಯೀರ್‍ಪರ್ವತದವರನ್ನೂ ನಶಿಸುವುದಕ್ಕಾಗಿ ಅವರಲ್ಲಿ ಹೊಂಚುಹಾಕುವವರನ್ನು ಇರಿಸಿದ್ದರು. ಅಮ್ಮೋನಿಯರೂ ಮೋವಾಬ್ಯರೂ ಸೇಯೀರ್‍ಪರ್ವತದವರ ಮೇಲೆ ಬಿದ್ದು ಅವರನ್ನು ಪೂರ್ಣವಾಗಿ ಸಂಹರಿಸಿಬಿಟ್ಟರು.</verse>
				<verse number="23">ಅವರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.</verse>
				<verse number="24">ಯೆಹೂದ್ಯರು ಮರುಭೂಮಿಯ ಬುರುಜಿಗೆ ಬಂದು ಆ ಸೈನ್ಯಸಮೂಹವಿದ್ದ ಕಡೆಗೆ ನೋಡಿದಾಗ ನೆಲದ ಮೇಲೆ ಬಿದ್ದಿರುವ ಹೆಣಗಳು ಹೊರತಾಗಿ ಜೀವದಿಂದುಳಿದವರು ಯಾರೂ ಕಾಣಿಸಲಿಲ್ಲ.</verse>
				<verse number="25">ಯೆಹೋಷಾಫಾಟನೂ ಅವನ ಜನರೂ ಸುಲಿಗೆಮಾಡುವುದಕ್ಕಾಗಿ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧ, ಇವುಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟನ್ನೂ ಸುಲಿದುಕೊಂಡರು. ಕೊಳ್ಳೆಯ ಮೊತ್ತ ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳವರೆಗೂ ಕೂಡಿಸುತ್ತಿದ್ದರು.</verse>
				<verse number="26">ನಾಲ್ಕನೆಯ ದಿನದಲ್ಲಿ ಬೆರಾಕ ಕಣಿವೆಗೆ ಕೂಡಿಬಂದರು. ಅಲ್ಲಿ ಅವರು ಸರ್ವೇಶ್ವರನನ್ನು ಸ್ತುತಿಸಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ‘ಬೆರಾಕ ಕಣಿವೆ’ ಎಂಬ ಹೆಸರಿದೆ.</verse>
				<verse number="27">ಆಮೇಲೆ ಯೆಹೂದ್ಯರು, ಜೆರುಸಲೇಮಿನವರು, ಅವರ ಮುಂಗಡೆಯಲ್ಲಿ ಯೆಹೋಷಾಫಾಟನು, ಸರ್ವೇಶ್ವರ ತಮಗೆ ಶತ್ರುಗಳ ಮೇಲೆ ಜಯವನ್ನು ಅನುಗ್ರಹಿಸಿದ್ದಾರೆಂದು ಜಯಘೋಷ ಮಾಡುತ್ತಾ ಜೆರುಸಲೇಮಿಗೆ ಹಿಂದಿರುಗಿದರು.</verse>
				<verse number="28">ಸ್ವರಮಂಡಲ, ಕಿನ್ನರಿ, ತುತೂರಿ ಇವುಗಳೊಡನೆ ಜೆರುಸಲೇಮಿನಲ್ಲಿರುವ ಸರ್ವೇಶ್ವರನಾಲಯಕ್ಕೆ ಬಂದರು.</verse>
				<verse number="29">ಸರ್ವೇಶ್ವರಾ ಸ್ವಾಮಿಯೇ ಇಸ್ರಯೇಲರ ಪರವಾಗಿ ಶತ್ರಗಳೊಡನೆ ಯುದ್ಧಮಾಡಿದರೆಂಬ ಸುದ್ದಿ ಅನ್ಯದೇಶಗಳ ರಾಜ್ಯಗಳವರೆಗೆ ಮುಟ್ಟಿದಾಗ, ಅವರೆಲ್ಲರು ಬಹಳ ಭಯಭೀತರಾದರು.</verse>
				<verse number="30">ಹೀಗೆ ದೇವ ಅನುಗ್ರಹದಿಂದ ಸುತ್ತಮುತ್ತಲಿನ ವೈರಿಗಳ ಭಯ ತಪ್ಪಿ, ಯೆಹೋಷಾಫಾಟನ ರಾಜ್ಯಕ್ಕೆ ಸಮಾಧಾನ ಉಂಟಾಯಿತು.</verse>
				<verse number="31">ಯೆಹೂದ್ಯರ ಅರಸ ಯೆಹೋಷಾಫಾಟನು ಪಟ್ಟಕ್ಕೆ ಬಂದಾಗ ಮೂವತ್ತೈದು ವರ್ಷದವನಾಗಿದ್ದನು. ಇವನು ಜೆರುಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆ ಇವನ ತಾಯಿ.</verse>
				<verse number="32">ತಂದೆ ಆಸನ ಮಾರ್ಗದಲ್ಲಿ ಇವನು ತಪ್ಪದೆ ನಡೆಯುತ್ತಾ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿ ಇದ್ದನು.</verse>
				<verse number="33">ಆದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರ ಮನಸ್ಸು ಇನ್ನೂ ತಮ್ಮ ಪಿತೃಗಳ ದೇವರ ಮೇಲೆ ನಾಟಿರಲಿಲ್ಲ.</verse>
				<verse number="34">ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆ ಇಸ್ರಯೇಲ್ ರಾಜರ ಗ್ರಂಥದಲ್ಲಿ ಹನಾನೀಯನ ಮಗ ಯೇಹುವಿನ ವೃತ್ತಾಂತದಲ್ಲಿ ದಾಖಲಾಗಿದೆ.</verse>
				<verse number="35">ಒಮ್ಮೆ ಯೆಹೂದ್ಯರ ಅರಸ ಯೆಹೋಷಾಫಾಟನು, ಬಹು ದುರಾಚಾರಿಯಾದ ಇಸ್ರಯೇಲರ ಅರಸ ಅಹಜ್ಯನೊಡನೆ ಒಂದು ಒಪ್ಪಂದ ಮಾಡಿಕೊಂಡನು.</verse>
				<verse number="36">ಅವರು ತಾರ್ಷೀಷಿಗೆ ಹೋಗುವುದಕ್ಕಾಗಿ ಹಡಗುಗಳನ್ನು ಕಟ್ಟಬೇಕೆಂದು ಒಪ್ಪಂದ ಮಾಡಿಕೊಂಡು ಅವುಗಳನ್ನು ಎಚ್ಯೋನ್ಗೆಬೆರಿನಲ್ಲಿ ಕಟ್ಟಿಸಿದರು.</verse>
				<verse number="37">ಆಗ ಮಾರೇಷಾ ಊರಿನ ದೋದಾವಾಹುವಿನ ಮಗ ಎಲೀಯೆಜರನು ಯೆಹೋಷಾಫಾಟನಿಗೆ ವಿರೋಧವಾಗಿ, “ನೀನು ಅಹಜ್ಯನೊಡನೆ ಒಪ್ಪಂದಮಾಡಿಕೊಂಡಿದ್ದರಿಂದ ಸರ್ವೇಶ್ವರ ನಿನ್ನ ಕೆಲಸವನ್ನು ಹಾಳುಮಾಡುವರು,” ಎಂದು ಪ್ರವಾದಿಸಿದನು. ಆ ಹಡಗುಗಳು ಒಡೆದುಹೋದುದರಿಂದ ತಾರ್ಷೀಷಿಗೆ ಹೊರಡಲೇ ಇಲ್ಲ.</verse>
			</chapter>
			<chapter number="21">
				<verse number="1">ಯೆಹೋಷಾಫಾಟನು ಮೃತನಾಗಿ ಪಿತೃಗಳ ಬಳಿಗೆ ಸೇರಿ ದಾವೀದನಗರದಲ್ಲಿದ್ದ ಪೂರ್ವಿಕರ ಸ್ಮಶಾನಭೂಮಿಯಲ್ಲಿ ಸಮಾಧಿಹೊಂದಿದ ಮೇಲೆ, ಅವನ ಸ್ಥಾನದಲ್ಲಿ ಅವನ ಮಗ ಯೆಹೋರಾಮನು ಅರಸನಾದನು.</verse>
				<verse number="2">ಇವನಿಗೆ ಅಜರ್ಯ, ಯೆಹೀಯೇಲ್, ಜೆಕರ್ಯ, ಅಜರ್ಯ, ಮೀಕಾಯೇಲ್, ಶೆಫಟ್ಯ ಎಂಬ ತಮ್ಮಂದಿರಿದ್ದರು. ಇವರೆಲ್ಲರು ಯೆಹೂದ್ಯರ ಅರಸ ಯೆಹೋಷಾಫಾಟನ ಮಕ್ಕಳು.</verse>
				<verse number="3">ಇವರ ತಂದೆ ಇವರಿಗೆ ಜುದೇಯದ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಅಲ್ಲದೆ, ಬೆಳ್ಳಿಬಂಗಾರ, ಅಮೂಲ್ಯ ವಸ್ತು ಇತ್ಯಾದಿ ವಿಶೇಷ ದಾನಗಳನ್ನು ಕೊಟ್ಟನು. ಆದರೆ ಯೆಹೋರಾಮನು ಹಿರಿಯ ಮಗನಾಗಿದ್ದುದರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.</verse>
				<verse number="4">ಯೆಹೋರಾಮನು ತನ್ನ ತಂದೆಯ ರಾಜ್ಯವನ್ನು ಪಡೆದುಕೊಂಡು, ತನ್ನ ಆಳ್ವಿಕೆಯನ್ನು ಸ್ಥಿರಗೊಳಿಸಿಕೊಂಡ ಮೇಲೆ, ತನ್ನ ಎಲ್ಲ ಸಹೋದರರನ್ನೂ ಕೆಲವು ಮಂದಿ ಇಸ್ರಯೇಲ್ ಪ್ರಮುಖರನ್ನೂ ಕತ್ತಿಯಿಂದ ಸಂಹರಿಸಿದನು.</verse>
				<verse number="5">ಯೆಹೋರಾಮನು ಪಟ್ಟಕ್ಕೆ ಬಂದಾಗ ಇವನಿಗೆ ಮೂವತ್ತೆರಡು ವರ್ಷ ವಯಸ್ಸು. ಇವನು ಜೆರುಸಲೇಮಿನಲ್ಲಿ ಎಂಟು ವರ್ಷ ಆಳಿದನು.</verse>
				<verse number="6">ಅಹಾಬನ ಮಗಳನ್ನು ಇವನು ಮದುವೆಮಾಡಿಕೊಂಡದ್ದರಿಂದ ಅಹಾಬನ ಕುಟುಂಬದವರಾದ ಇಸ್ರಯೇಲ್ ಅರಸರ ಹೆಜ್ಜೆಯಲ್ಲೇ ನಡೆದು ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.</verse>
				<verse number="7">ಆದರೂ ಸರ್ವೇಶ್ವರ ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿ ಹೇಳಿದ್ದರಿಂದ ಆ ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.</verse>
				<verse number="8">ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರುದ್ಧ ದಂಗೆಯೆದ್ದರು; ಸ್ವತಂತ್ರರಾಗಿ ತಾವೇ ತಮಗೊಬ್ಬ ಅರಸನನ್ನು ನೇಮಿಸಿಕೊಂಡರು.</verse>
				<verse number="9">ಆಗ ಯೆಹೋರಾಮನು ತನ್ನ ಸರದಾರರನ್ನೂ ಎಲ್ಲ ರಥಬಲವನ್ನೂ ಕೂಡಿಸಿಕೊಂಡು ಜೋರ್ಡನ್ ನದಿಯನ್ನು ದಾಟಿದನು. ಎದೋಮ್ಯರು ಬಂದು ಅವನನ್ನು ಸುತ್ತಿಕೊಳ್ಳಲು ಅವನು ರಾತ್ರಿಯಲ್ಲೇ ದಂಡೆತ್ತಿಹೋಗಿ ಅವರನ್ನೂ ಅವರ ರಥಬಲದ ಅಧಿಪತಿಗಳನ್ನೂ ಸೋಲಿಸಿ ಪಾರಾದನು.</verse>
				<verse number="10">ಯೆಹೂದ್ಯರಿಗೆ ವಿರುದ್ಧ ದಂಗೆಯೆದ್ದ ಎದೋಮ್ಯರು ಅಂದಿನಿಂದ ಇಂದಿನವರೆಗೂ ಸ್ವತಂತ್ರರಾಗಿದ್ದಾರೆ. ಆ ಕಾಲದಲ್ಲೇ ಲಿಬ್ನದವರೂ ಅವನ ಕೈಯಿಂದ ತಪ್ಪಿಸಿಕೊಂಡು ಸ್ವತಂತ್ರರಾದರು. ಯೆಹೋರಾಮನು ತನ್ನ ಪಿತೃಗಳ ದೇವರಾದ ಸರ್ವೇಶ್ವರನನ್ನು ಬಿಟ್ಟದ್ದೇ ಇದಕ್ಕೆ ಕಾರಣ.</verse>
				<verse number="11">ಅವನು ಜುದೇಯದ ಗುಡ್ಡಗಳಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಜೆರುಸಲೇಮಿನವರು ದೇವದ್ರೋಹ ಮಾಡುವಂತೆ ಪ್ರೇರೇಪಿಸಿ, ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.</verse>
				<verse number="12">ಹೀಗಿರಲು, ಪ್ರವಾದಿ ಎಲೀಯನು ಪತ್ರದ ಮೂಲಕ ಅವನಿಗೆ, “ನಿನ್ನ ಪೂರ್ವಜ ದಾವೀದನ ದೇವರಾಗಿರುವ ಸರ್ವೇಶ್ವರನ ಮಾತನ್ನು ಕೇಳು: ನೀನು ನಿನ್ನ ತಂದೆ ಯೆಹೋಷಾಫಾಟನ ಮಾರ್ಗದಲ್ಲಿ ಹಾಗು ಯೆಹೂದ್ಯರ ಅರಸ ಆಸನ ಮಾರ್ಗದಲ್ಲಿ ನಡೆಯಲಿಲ್ಲ;</verse>
				<verse number="13">ಇಸ್ರಯೇಲ್ ಅರಸರ ಹೆಜ್ಜೆಯಲ್ಲೇ ನಡೆದು, ಅಹಾಬನ ಮನೆಯವರಲ್ಲಿ ಪ್ರಬಲವಾಗಿದ್ದ ದೇವದ್ರೋಹವನ್ನು ಮಾಡುವಂತೆ ಯೆಹೂದ್ಯರನ್ನೂ ಜೆರುಸಲೇಮಿನವರನ್ನೂ ಪ್ರೇರೇಪಿಸಿದೆ; ಮತ್ತು ನಿನ್ನ ತಂದೆಯ ಕುಟುಂಬದವರೂ ನಿನಗಿಂತ ಉತ್ತಮರೂ ನಿನ್ನ ಸಹೋದರರೂ ಆಗಿದ್ದವರನ್ನು ವಧಿಸಿದೆ;</verse>
				<verse number="14">ಆದುದರಿಂದ ಸರ್ವೇಶ್ವರ ನಿನ್ನ ಪ್ರಜೆಯನ್ನೂ ಮಡದಿಮಕ್ಕಳನ್ನೂ ಸರ್ವಸ್ವವನ್ನೂ ಮಹಾ ಆಪತ್ತಿಗೆ ಗುರಿಮಾಡುವರು.</verse>
				<verse number="15">ನಿನಗಾದರೋ ಕರುಳುಬೇನೆಯ ಕಠಿಣರೋಗ ಬರುವುದು. ಅದು ಬಹುದಿನಗಳವರೆಗೂ ವಾಸಿ ಆಗದು; ಕಡೆಯಲ್ಲಿ ನಿನ್ನ ಕರುಳುಗಳು ಹೊರಗೆ ಬೀಳುವುವು,” ಎಂದು ತಿಳಿಸಿದನು.</verse>
				<verse number="16">ಸರ್ವೇಶ್ವರ ಫಿಲಿಷ್ಟಿಯರನ್ನೂ ಸುಡಾನಿನ ನೆರೆಯವರಾದ ಅರೇಬಿಯರನ್ನೂ ಯೆಹೋರಾಮನಿಗೆ ವಿರೋಧಿಗಳಾಗುವಂತೆ ಪ್ರಚೋದಿಸಿದರು.</verse>
				<verse number="17">ಅವರು ಜುದೇಯದ ಮೇಲೆ ಯುದ್ಧಕ್ಕೆ ಬಂದು, ನಾಡಿನೊಳಗೆ ನುಗ್ಗಿ, ಅರಮನೆಯಲ್ಲಿ ಸಿಕ್ಕಿದ ಎಲ್ಲ ಸೊತ್ತನ್ನೂ ಅರಸನ ಮಡದಿ ಮಕ್ಕಳನ್ನೂ ಸೆರೆಗೆ ಒಯ್ದರು. ಅವನಿಗೆ ಕಿರಿಯಮಗ ಯೆಹೋವಾಹಾಜನ ಹೊರತು ಮಕ್ಕಳೇ ಉಳಿಯಲಿಲ್ಲ.</verse>
				<verse number="18">ಇಷ್ಟೆಲ್ಲಾ ಆದ ಮೇಲೆ, ಸರ್ವೇಶ್ವರ ಅವನ ಕರುಳುಗಳಲ್ಲಿ ವಾಸಿಯಾಗಲಾರದ ರೋಗವನ್ನು ಉಂಟುಮಾಡಿದರು.</verse>
				<verse number="19">ಕಾಲಾಂತರದಲ್ಲಿ ಅಂದರೆ, ಸುಮಾರು ಎರಡು ವರ್ಷಗಳಾದ ಮೇಲೆ, ಅದೇ ರೋಗದ ನಿಮಿತ್ತ ಕರುಳುಗಳು ಹೊರಬಿದ್ದವು. ಅವನು ಕಡುಬೇನೆಯಿಂದ ಸತ್ತನು. ಅವನ ಪೂರ್ವಿಕರಿಗೆ ಧೂಪಹಾಕಿದಂತೆ ಅವನ ಪ್ರಜೆಗಳು ಅವನಿಗೆ ಹಾಕಲಿಲ್ಲ.</verse>
				<verse number="20">ಅವನು ಪಟ್ಟಕ್ಕೆ ಬಂದಾಗ ಮೂವತ್ತ ಎರಡು ವರ್ಷದವನಾಗಿದ್ದನು. ಜೆರುಸಲೇಮಿನಲ್ಲಿ ಎಂಟುವರ್ಷ ಆಳಿದನು. ಅವನು ತೀರಿಹೋದಾಗ ಯಾರೂ ಶೋಕಿಸಲಿಲ್ಲ. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು; ಆದರೆ ರಾಜಸ್ಮಶಾನದಲ್ಲಿ ಮಾಡಲಿಲ್ಲ.</verse>
			</chapter>
			<chapter number="22">
				<verse number="1">ಜೆರುಸಲೇಮಿನವರು ಯೆಹೋರಾಮನಿಗೆ ಬದಲಾಗಿ ಅವನ ಕಿರಿಯಮಗ ಅಹಜ್ಯನನ್ನು ಅರಸನನ್ನಾಗಿ ಮಾಡಿದರು. ಅರೇಬಿಯರೊಡನೆ ಯೆಹೋರಾಮನ ಪಾಳೆಯಕ್ಕೆ ಬಂದ ಕೊಳ್ಳೆಗಾರರು ಅವನ ಹಿರಿಯ ಮಕ್ಕಳನ್ನೆಲ್ಲಾ ಕೊಂದುಬಿಟ್ಟಿದ್ದರು. ಆದುದರಿಂದ ಜುದೇಯದ ಅರಸ ಯೆಹೋರಾಮನ ಮಗ ಅಹಜ್ಯನು ಅರಸನಾದನು.</verse>
				<verse number="2">ಪಟ್ಟಕ್ಕೆ ಬಂದಾಗ ಅವನಿಗೆ ನಲ್ವತ್ತೆರಡು ವರ್ಷ ಪ್ರಾಯ. ಇವನು ಜೆರುಸಲೇಮಿನಲ್ಲಿ ಒಂದು ವರ್ಷ ಆಳಿದನು; ಒಮ್ರಿಯ ಮೊಮ್ಮಗಳಾದ ಅತಲ್ಯ ಎಂಬಾಕೆ ಇವನ ತಾಯಿ;</verse>
				<verse number="3">ತನ್ನ ತಾಯಿಯ ದುರ್ಬೋಧನೆಗೆ ಕಿವಿಗೊಟ್ಟು ಇವನೂ ದುರಾಚಾರಿಯಾಗಿ ಅಹಾಬನ ಮನೆಯವರ ಹೆಜ್ಜೆ ಜಾಡಿನಲ್ಲೇ ನಡೆದನು.</verse>
				<verse number="4">ಇವನ ತಂದೆ ತೀರಿಹೋದ ಮೇಲೆ ಅಹಾಬನ ಕುಟುಂಬದವರೇ ಇವನಿಗೆ ಸಲಹೆಕೊಟ್ಟು ಇವನನ್ನು ಕೆಡಿಸುತ್ತಾ ಬಂದರು. ಈ ಕಾರಣ ಸರ್ವೇಶ್ವರನಿಗೆ ದ್ರೋಹಿಯಾಗಿ ನಡೆದನು.</verse>
				<verse number="5">ಆ ಪ್ರೇರಣೆಯಿಂದಲೇ ಇಸ್ರಯೇಲರ ಅರಸನೂ ಅಹಾಬನ ಮಗನೂ ಆದ ಯೋರಾಮನ ಜೊತೆಯಲ್ಲಿ ಸಿರಿಯಾದ ಅರಸ ಹಜಾಯೇಲನಿಗೆ ವಿರುದ್ಧ ಯುದ್ಧಮಾಡುವುದಕ್ಕೆ ರಾಮೋತ್‍ಗಿಲ್ಯಾದಿಗೆ ಹೋದನು. ಸಿರಿಯಾದವರು ಯೋರಾಮನನ್ನು ಯುದ್ಧದಲ್ಲಿ ಗಾಯಪಡಿಸಿದರು.</verse>
				<verse number="6">ಆ ಗಾಯಗಳನ್ನು ಮಾಯಿಸಿಕೊಳ್ಳುವುದಕ್ಕಾಗಿ ಅವನು ಜೆಸ್ರೀಲಿಗೆ ಬಂದನು. ಅವನು ಅಸ್ವಸ್ಥನಾಗಿದ್ದುದರಿಂದ ಯೆಹೂದ್ಯರ ಅರಸ ಯೆಹೋರಾಮನ ಮಗನಾದ ಅಹಜ್ಯನು ಅವನನ್ನು ನೋಡುವುದಕ್ಕೆ ಅಲ್ಲಿಗೆ ಹೋದನು.</verse>
				<verse number="7">ಅಹಜ್ಯನು ಯೋರಾಮನ ಬಳಿಗೆ ಹೋಗಿ ನಾಶವಾದದ್ದು ದೈವಸಂಕಲ್ಪದಿಂದಲೇ. ಅವನು ಆ ಸ್ಥಳವನ್ನು ಮುಟ್ಟಿದ ಕೂಡಲೆ ಯೋರಾಮನ ಜೊತೆಯಲ್ಲಿ ನಿಂಷಿಯ ಮಗ ಯೇಹುವನ್ನು ಎದುರುಗೊಳ್ಳುವುದಕ್ಕೆ ಹೋದನು. ಸರ್ವೇಶ್ವರ ಅಹಾಬನ ಮನೆಯನ್ನು ನಿರ್ನಾಮ ಮಾಡುವುದಕ್ಕಾಗಿಯೇ ಯೇಹುವಿಗೆ ರಾಜಾಭಿಷೇಕ ಮಾಡಿಸಿ ಇದ್ದರು.</verse>
				<verse number="8">ಯೇಹುವು, ಅಹಾಬನ ಮನೆಯವರ ಮೇಲೆ ಆ ನಿರ್ಣಯವನ್ನು ನೆರವೇರಿಸುತ್ತಿರುವಾಗ ತನಗೆ ಸಿಕ್ಕಿದ ಯೆಹೂದ್ಯ ಪ್ರಮುಖರನ್ನೂ ಅಹಜ್ಯನಿಗೆ ಸೇವೆಮಾಡುತ್ತಿದ್ದ ಅವನ ಅಣ್ಣತಮ್ಮಂದಿರ ಮಕ್ಕಳನ್ನೂ ಕೊಲ್ಲಿಸಿದನು;</verse>
				<verse number="9">ಆಮೇಲೆ ಅಹಜ್ಯನನ್ನು ಹುಡುಕಿಸಿದನು; ಅವನು ಸಮಾರಿಯದಲ್ಲಿ ಅಡಗಿಕೊಂಡಿದ್ದನು. ಜನರು ಅವನನ್ನು ಯೇಹುವಿನ ಬಳಿಗೆ ಹಿಡಿದುತಂದು, ವಧಿಸಿದರು. “ಇವನು ಸರ್ವೇಶ್ವರನ ನೈಜಭಕ್ತನಾದ ಯೆಹೋಷಾಫಾಟನ ಮೊಮ್ಮಗನಲ್ಲವೇ?” ಎಂದುಕೊಂಡು ಅವನನ್ನು ಸಮಾಧಿಮಾಡಿದರು. ರಾಜ್ಯಾಧಿಕಾರವನ್ನು ವಹಿಸಿಕೊಳ್ಳಲು ಅಹಜ್ಯನ ಮನೆಯವರಲ್ಲಿ ಸಮರ್ಥರಾರೂ ಉಳಿಯಲಿಲ್ಲ.</verse>
				<verse number="10">ಅಹಜ್ಯನು ಮರಣಹೊಂದಿದನೆಂಬುದನ್ನು ಅವನ ತಾಯಿ ಅತಲ್ಯಳು ಕೇಳಿದ ಕೂಡಲೆ ಜುದೇಯರ ರಾಜಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟಳು.</verse>
				<verse number="11">ಆದರೆ ರಾಜಪುತ್ರಿಯಾದ ಯೆಹೋಷಬತ್ ಎಂಬಾಕೆ, ಹತರಾಗುವುದಕ್ಕಿದ್ದ ರಾಜಪುತ್ರರ ಮಧ್ಯೆಯಿಂದ ಅಹಜ್ಯನ ಮಗ ಯೆಹೋವಾಷನನ್ನು, ಯಾರಿಗೂ ತಿಳಿಯದಂತೆ ಅವನ ದಾದಿಯೊಡನೆ ತೆಗೆದುಕೊಂಡು ಹೋಗಿ ಮಲಗುವ ಕೋಣೆಯಲ್ಲಿ ಅಡಗಿಸಿಟ್ಟಳು. ಅರಸ ಯೆಹೋರಾಮನ ಮಗಳೂ ಅಹಜ್ಯನ ಸಹೋದರಿಯೂ ಯಾಜಕ ಯೆಹೋಯಾದನ ಹೆಂಡತಿಯೂ ಆಗಿದ್ದ ಯೆಹೋಷಬತಳು ಹೀಗೆ ಅವನನ್ನು ಅತಲ್ಯಳಿಂದ ಹತನಾಗದಂತೆ ರಕ್ಷಿಸಿದಳು.</verse>
				<verse number="12">ಅವನು ಆರು ವರ್ಷಗಳವರೆಗೂ ಅವರೊಡನೆ ಗುಪ್ತವಾಗಿ ದೇವಾಲಯದಲ್ಲಿ ಇದ್ದನು. ಆಗ ಅತಲ್ಯಳೇ ದೇಶವನ್ನಾಳುತ್ತಿದ್ದಳು.</verse>
			</chapter>
			<chapter number="23">
				<verse number="1">ಏಳನೆಯ ವರ್ಷದಲ್ಲಿ ಯೆಹೋಯಾದನು ಧೈರ್ಯತಂದುಕೊಂಡು ಯೆರೋಹಾಮನ ಮಗ ಅಜರ್ಯ, ಯೆಹೋಹಾನಾನನ ಮಗ ಇಷ್ಮಾಯೇಲ್, ಓಬೇದನ ಮಗ ಅಜರ್ಯ, ಅದಾಯನ ಮಗ ಮಾಸೇಯ, ಜಿಕ್ರಿಯ ಮಗ ಎಲೀಷಾಫಾಟ್ ಎಂಬ ಶತಾಧಿಪತಿಗಳೊಡನೆ ಒಂದು ಒಪ್ಪಂದ ಮಾಡಿಕೊಂಡನು.</verse>
				<verse number="2">ಇವರು ಜುದೇಯದಲ್ಲೆಲ್ಲಾ ಸಂಚರಿಸಿ ಎಲ್ಲ ಪಟ್ಟಣಗಳಿಂದ ಲೇವಿಯರನ್ನೂ ಇಸ್ರಯೇಲರ ಗೋತ್ರಪ್ರಧಾನರನ್ನೂ ಕೂಡಿಸಿದರು. ಅವರೆಲ್ಲರು ಜೆರುಸಲೇಮಿಗೆ ಬಂದರು.</verse>
				<verse number="3">ಹೀಗೆ ಕೂಡಿಬಂದವರೆಲ್ಲರು ದೇವಾಲಯದಲ್ಲಿ ಅರಸನೊಂದಿಗೆ ಒಪ್ಪಂದ ಮಾಡಿಕೊಂಡರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು; ಸರ್ವೇಶ್ವರಸ್ವಾಮಿ ದಾವೀದನ ಸಂತಾನದವರಿಗೆ ಮಾಡಿದ ವಾಗ್ದಾನಕ್ಕನುಸಾರ ಅರಸನಾಗತಕ್ಕವನು ಇವನೇ.</verse>
				<verse number="4">ಈಗ ನೀವು ಮಾಡತಕ್ಕದ್ದೇನೆಂದರೆ - ಸಬ್ಬತ್‍ದಿನ ದೇವಾಲಯದ ಸೇವೆಗೆ ಬರಬೇಕಾದ ಲೇವಿಯರಲ್ಲೂ ಯಾಜಕರಲ್ಲೂ ಮೂರರಲ್ಲೊಂದು ಭಾಗದವರು ದೇವಸ್ಥಾನದ ದ್ವಾರಪಾಲಕರಾಗಿ ನಿಲ್ಲಬೇಕು.</verse>
				<verse number="5">ಇನ್ನೊಂದು ಭಾಗದವರು ಅರಮನೆಯನ್ನೂ ಮತ್ತೊಂದು ಭಾಗದವರು ಯೆಸೋದ್‍ ಬಾಗಿಲನ್ನೂ ಕಾಯಬೇಕು. ಇತರ ಜನರೆಲ್ಲರು ಸರ್ವೇಶ್ವರನ ಆಲಯದ ಪ್ರಾಕಾರದಲ್ಲೇ ಇರಬೇಕು.</verse>
				<verse number="6">ಯಾಜಕರು ಹಾಗು ಸೇವೆಯಲ್ಲಿರುವ ಲೇವಿಯರು ಇವರನ್ನು ಬಿಟ್ಟು ಬೇರೆ ಯಾರೂ ಸರ್ವೇಶ್ವರನ ಆಲಯದೊಳಗೆ ಬರಬಾರದು. ಇವರು ಪರಿಶುದ್ಧರಾಗಿರುವುದರಿಂದ ಬರಬಹುದು. ಉಳಿದ ಜನರೆಲ್ಲರು ಸರ್ವೇಶ್ವರನ ಆಜ್ಞಾನುಸಾರ ಹೊರಗಿರಬೇಕು.</verse>
				<verse number="7">ಲೇವಿಯರು ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ನಿಂತು ಆಲಯದೊಳಕ್ಕೆ ನುಗ್ಗುವವರನ್ನು ಸಂಹರಿಸಬೇಕು. ಅರಸನು ಹೋಗಿ ಬರುವಾಗಲೆಲ್ಲಾ ಅವರು ಅವನ ಜೊತೆಯಲ್ಲೇ ಇರಬೇಕು,” ಎಂದು ಹೇಳಿದನು.</verse>
				<verse number="8">ಲೇವಿಯರೂ ಎಲ್ಲ ಯೆಹೂದ್ಯರೂ ಯಾಜಕ ಯೆಹೋಯಾದನ ಆಜ್ಞೆಯಂತೆ ನಡೆದುಕೊಂಡರು. ಅವನು ಸಬ್ಬತ್‍ದಿನದಲ್ಲಿ ಸೇವಾವಿಮುಕ್ತರಾದ ವರ್ಗದವರನ್ನು ಕಳುಹಿಸಿಬಿಡಲಿಲ್ಲ; ಆದುದರಿಂದ ಪ್ರತಿಯೊಬ್ಬನು ಸಬ್ಬತ್‍ದಿನ ಮನೆಗೆ ಹೋಗಬೇಕಾಗಿದ್ದ ಮತ್ತು ಬರಬೇಕಾಗಿದ್ದ ತನ್ನ ಕೈ ಕೆಳಗಿನವರನ್ನು ಕೂಡಿಸಿಕೊಂಡನು.</verse>
				<verse number="9">ದೇವಾಲಯದಲ್ಲಿಟ್ಟಿದ್ದ ದಾವೀದ ಅರಸನ ಬರ್ಜಿ, ಗುರಾಣಿ, ಖೇಡ್ಯಗಳೇ ಮುಂತಾದ ಆಯುಧಗಳನ್ನು ಯಾಜಕ ಯೆಹೋಯಾದನು ಶತಾಧಿಪತಿಗಳಿಗೆ ಕೊಟ್ಟನು.</verse>
				<verse number="10">ಆಯುಧಪಾಣಿಗಳಾದ ಎಲ್ಲ ಜನರನ್ನು ಅರಸನ ಸುತ್ತಲು ದೇವಾಲಯದ ದಕ್ಷಿಣದಿಕ್ಕಿನ ಮೂಲೆಯಿಂದ ಬಲಿಪೀಠದವರೆಗೂ ಅಲ್ಲಿಂದ ಉತ್ತರದಿಕ್ಕಿನ ಮೂಲೆಯವರೆಗೂ ಸಾಲಾಗಿ ನಿಲ್ಲಿಸಿದನು.</verse>
				<verse number="11">ಆಮೇಲೆ ಅವನೂ ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರೆದುಕೊಂಡು ಬಂದು ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ಧರ್ಮಶಾಸ್ತ್ರವನ್ನು ಕೊಟ್ಟು, ಅವನಿಗೆ ರಾಜಾಭಿಷೇಕ ಮಾಡಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.</verse>
				<verse number="12">ಜನರು ಅತ್ತಿತ್ತ ಓಡಾಡುತ್ತಾ ಅರಸನನ್ನು ಹರಸುವ ಗದ್ದಲವನ್ನು ಅತಲ್ಯಳು ಕೇಳಿ ಅವರು ಕೂಡಿದ್ದ ಸರ್ವೇಶ್ವರನ ಆಲಯಕ್ಕೆ ಬಂದಳು.</verse>
				<verse number="13">ಅಲ್ಲಿ ಅರಸನು ಬಾಗಿಲಿನ ಬಳಿಯಲ್ಲಿರುವ ರಾಜಸ್ತಂಭದ ಹತ್ತಿರ ನಿಂತಿದ್ದನು. ಅಧಿಪತಿಗಳು ಹಾಗೂ ತುತೂರಿಗಳನ್ನು ಊದುವವರು ಅರಸನ ಹತ್ತಿರವಿದ್ದರು; ಜನಸಾಮಾನ್ಯರೆಲ್ಲರೂ ಸಂತೋಷದಿಂದ ಕೊಂಬೂದುತ್ತಿದ್ದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಾ ಜನಪದ ಕೀರ್ತನೆಗಳನ್ನು ನುಡಿಸುತ್ತಿದ್ದರು. ಇದನ್ನು ಕಂಡಕೂಡಲೆ ಆಕೆ ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, “ದ್ರೋಹ! ದ್ರೋಹ!” ಎಂದು ಕೂಗಿದಳು.</verse>
				<verse number="14">ಆಗ ಯಾಜಕ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, “ಈಕೆಯನ್ನು ಸರ್ವೇಶ್ವರನ ಆಲಯದಲ್ಲಿ ಕೊಲ್ಲಬೇಡಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ,” ಎಂದು ಆಜ್ಞಾಪಿಸಿದನು.</verse>
				<verse number="15">ಅವರು ಆಕೆಯನ್ನು ಹಿಡಿದು ಅರಮನೆಗೆ ಹೋಗುವ ಕುದುರೆಬಾಗಿಲಿನ ತನಕ ಒಯ್ದು, ಅಲ್ಲಿ ಕೊಂದರು.</verse>
				<verse number="16">ಅನಂತರ ಯೆಹೋಯಾದನು ಎಲ್ಲ ಜನರನ್ನೂ ಅರಸನನ್ನೂ ಪ್ರೇರಿಸಿ ತಾವೆಲ್ಲರೂ ಸರ್ವೇಶ್ವರನ ಪ್ರಜೆಗಳಾಗಿರುವೆವೆಂದು ಅವರೊಡನೆ ಪ್ರಮಾಣಮಾಡಿದನು.</verse>
				<verse number="17">ತರುವಾಯ ಜನರೆಲ್ಲರೂ ಬಾಳ್‍ದೇವಸ್ಥಾನಕ್ಕೆ ಹೋಗಿ ಪೂಜಾರಿಯಾದ ಮತ್ತಾನನನ್ನು ಬಲಿಪೀಠಗಳ ಮುಂದೆಯೇ ಕೊಂದರು; ಆ ದೇವಸ್ಥಾನವನ್ನೂ ಅದರಲ್ಲಿದ್ದ ಪೀಠ ಹಾಗೂ ವಿಗ್ರಹಗಳನ್ನೂ ಹಾಳುಮಾಡಿಬಿಟ್ಟರು.</verse>
				<verse number="18">ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಸರ್ವೇಶ್ವರನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಸರ್ವೇಶ್ವರನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ, ಮೋಶೆಯ ಧರ್ಮಶಾಸ್ತ್ರಾನುಸಾರ ಸರ್ವೇಶ್ವರನಿಗೆ ದಹನಬಲಿ ಸಮರ್ಪಣೆ ಮಾಡುವುದು ಅವರ ಕರ್ತವ್ಯವಾಗಿ ಇತ್ತು.</verse>
				<verse number="19">ಯಾವ ವಿಧದಲ್ಲಾದರೂ ಅಶುದ್ಧನಾದವನು ಸರ್ವೇಶ್ವರನ ಆಲಯವನ್ನು ಪ್ರವೇಶಿಸದಂತೆ ಯೆಹೋಯಾದನು ಆಯಾ ಬಾಗಿಲುಗಳಲ್ಲಿ ದ್ವಾರಪಾಲಕರನ್ನಿರಿಸಿದನು.</verse>
				<verse number="20">ಆಮೇಲೆ ಅವನು ಶತಾಧಿಪತಿಗಳು, ಶ್ರೀಮಂತರು, ಜನನಾಯಕರು ಹಾಗು ಶ್ರೀಸಾಮಾನ್ಯರು ಇವರೊಡನೆ ಅರಸನನ್ನು ಸರ್ವೇಶ್ವರನ ಆಲಯದಿಂದ ಮೇಲಣ ಬಾಗಿಲಿನ ಮಾರ್ಗವಾಗಿ ಅರಮನೆಗೆ ಕರೆದುಕೊಂಡು ಹೋಗಿ ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದನು.</verse>
				<verse number="21">ನಾಡಿನವರೆಲ್ಲರೂ ಬಹಳವಾಗಿ ಸಂತೋಷಪಟ್ಟರು; ಪಟ್ಟಣವು ಶಾಂತವಾಯಿತು; ಅತಲ್ಯಳನ್ನು ಕತ್ತಿಯಿಂದ ಸಂಹರಿಸಿದರು.</verse>
			</chapter>
			<chapter number="24">
				<verse number="1">ಯೆಹೋವಾಷನು ಅರಸನಾದಾಗ ಅವನಿಗೆ ಏಳು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಬೇರ್ಷೆಬದವಳಾದ ಚಿಬ್ಯಳು ಅವನ ತಾಯಿ.</verse>
				<verse number="2">ಯಾಜಕ ಯೆಹೋಯಾದನ ಜೀವಮಾನದಲ್ಲೆಲ್ಲಾ ಅವನು ಸರ್ವೇಶ್ವರನ ಚಿತ್ತಾನುಸಾರ ನಡೆದುಕೊಳ್ಳುತ್ತಿದ್ದನು.</verse>
				<verse number="3">ಯೆಹೋಯಾದನು ಅರಸನಿಗೆ ಇಬ್ಬರು ಕನ್ಯೆಯರನ್ನು ಮದುವೆಮಾಡಿ ಕೊಟ್ಟನು; ಅವರಿಂದ ಗಂಡು ಹೆಣ್ಣು ಮಕ್ಕಳು ಜನಿಸಿದರು.</verse>
				<verse number="4">ಕ್ರಮೇಣ ಯೆಹೋವಾಷನು ಸರ್ವೇಶ್ವರನ ಆಲಯವನ್ನು ದುರಸ್ತಿಮಾಡಿಸುವುದಕ್ಕೆ ಮನಸ್ಸುಮಾಡಿದನು.</verse>
				<verse number="5">ಯಾಜಕರನ್ನೂ ಲೇವಿಯರನ್ನೂ ಕೂಡಿಸಿ ಅವರಿಗೆ, “ನೀವು ಜುದೇಯದ ಪಟ್ಟಣಗಳಿಗೆ ಹೋಗಿ ನಿಮ್ಮ ದೇವರಾದ ಸರ್ವೇಶ್ವರನ ಆಲಯದ ವಾರ್ಷಿಕ ದುರಸ್ತಿಯ ಖರ್ಚಿಗಾಗಿ ಎಲ್ಲ ಇಸ್ರಯೇಲರಿಂದ ಹಣ ಕೂಡಿಸಿರಿ; ಈ ಕಾರ್ಯವನ್ನು ಶೀಘ್ರವಾಗಿ ನೆರವೇರಿಸಿರಿ,” ಎಂದು ಆಜ್ಞಾಪಿಸಿದನು.</verse>
				<verse number="6">ಆದರೂ ಆ ಲೇವಿಯರು ಅವಸರಪಡಲಿಲ್ಲ. ಆದುದರಿಂದ ಅರಸನು ಅವರ ಮುಖ್ಯಸ್ಥನಾದ ಯೆಹೋಯಾದನನ್ನು ಕರೆಯಿಸಿ, “ಸರ್ವೇಶ್ವರನ ದಾಸನಾದ ಮೋಶೆಯ ವಿಧಿಗನುಸಾರ ಇಸ್ರಯೇಲ್ ಸಮಾಜದವರೆಲ್ಲರು ದೇವದರ್ಶನದ ಗುಡಾರಕ್ಕೆ ಕೊಡಬೇಕಾದ ಕಾಣಿಕೆಯನ್ನು ಈ ಲೇವಿಯರು ಯೆಹೂದ್ಯರಿಂದಲೂ ಜೆರುಸಲೇಮಿನ ಜನರಿಂದಲೂ ವಸೂಲಿ ಮಾಡುವಂತೆ ನೀನೇಕೆ ನೋಡಿಕೊಳ್ಳಲಿಲ್ಲ?</verse>
				<verse number="7">ಅತಿದುಷ್ಟಳಾದ ಅತಲ್ಯಳ ಮನೆಯವರು ದೇವಾಲಯವನ್ನು ಹಾಳುಮಾಡಿ, ಸರ್ವೇಶ್ವರನ ಆಲಯದ ಪ್ರತಿಷ್ಠಿತ ವಸ್ತುಗಳನ್ನು ಬಾಳ್‍ದೇವತೆಗಳಿಗಾಗಿ ಕೊಟ್ಟುಬಿಟ್ಟಿದ್ದಾರಲ್ಲವೇ?,” ಎಂದು ಹೇಳಿದನು.</verse>
				<verse number="8">ಅನಂತರ ಅರಸನು ಒಂದು ಪೆಟ್ಟಿಗೆಯನ್ನು ಮಾಡಿಸಿ ಅದನ್ನು ಸರ್ವೇಶ್ವರನ ಆಲಯದ ಬಾಗಿಲಿನ ಹೊರಗೆ ಇರಿಸಿದನು.</verse>
				<verse number="9">ದೇವರ ದಾಸ ಮೋಶೆಯು ಮರುಭೂಮಿಯಲ್ಲಿ ವಿಧಿಸಿದಂತೆ ಇಸ್ರಯೇಲರು ಸರ್ವೇಶ್ವರನಿಗೆ ಕೊಡಬೇಕಾದ ಕಾಣಿಕೆಯನ್ನು ತಂದುಕೊಡಬೇಕು ಎಂಬುದಾಗಿ ಜುದೇಯದಲ್ಲೂ ಜೆರುಸಲೇಮಿನಲ್ಲೂ ಪ್ರಕಟಿಸಿದನು.</verse>
				<verse number="10">ಎಲ್ಲ ಮುಖ್ಯಸ್ಥರೂ ಜನಸಾಮಾನ್ಯರೂ ಸಂತೋಷದಿಂದ, ಬೇಕಾಗುವಷ್ಟು ಹಣವನ್ನು ತಂದು ಪೆಟ್ಟಿಗೆಯಲ್ಲಿ ಹಾಕಿದರು.</verse>
				<verse number="11">ಪೆಟ್ಟಿಗೆ ತುಂಬಾ ಹಣವಿರುತ್ತದೆಂದು ಕಂಡುಬಂದಾಗಲೆಲ್ಲಾ ಲೇವಿಯರು ಪೆಟ್ಟಿಗೆಯನ್ನು ಆಸ್ಥಾನದ ಅಧಿಕಾರಿಗಳ ಬಳಿಗೆ ತರುತ್ತಿದ್ದರು. ಆಗ ಅರಸನ ಕಾರ್ಯದರ್ಶಿಯೂ ಮಹಾಯಾಜಕನ ಪ್ರತಿನಿಧಿಯೂ ಬಂದು ಅದನ್ನು ತೆರವು ಮಾಡಿ ಮತ್ತೆ ಅದರ ಸ್ಥಳದಲ್ಲಿಡುತ್ತಿದ್ದರು. ಅವರು ಪ್ರತಿದಿನವೂ ಈ ಪ್ರಕಾರ ಮಾಡುತ್ತಿದ್ದುದರಿಂದ ಬಹಳ ಹಣವನ್ನು ಸಂಗ್ರಹಿಸಲಾಯಿತು.</verse>
				<verse number="12">ಅರಸನೂ ಯೆಹೋಯಾದನೂ ಅದನ್ನು ಸರ್ವೇಶ್ವರನ ಆಲಯದ ಕೆಲಸವನ್ನು ನಡೆಸುವವರಿಗೆ ಒಪ್ಪಿಸಿದರು. ಇವರು ಸರ್ವೇಶ್ವರನ ಆಲಯದ ದುರಸ್ತಿ ಕೆಲಸಕ್ಕಾಗಿ, ಶಿಲ್ಪಿಗಾರರನ್ನೂ ಬಡಗಿಯರನ್ನೂ ಅದನ್ನು ಭದ್ರಪಡಿಸುವುದಕ್ಕಾಗಿ ಕಮ್ಮಾರರನ್ನೂ ಕಂಚುಗಾರರನ್ನೂ ಹಚ್ಚಿದರು.</verse>
				<verse number="13">ಕೆಲಸ ಮಾಡುವವರು ಬಹು ಶ್ರಮವಹಿಸಿದ್ದರಿಂದ ದುರಸ್ತಿ ಕೆಲಸ ಮುಂದುವರೆಯಿತು. ಅವರು ದೇವಾಲಯವನ್ನು ಭದ್ರಪಡಿಸಿ ಪೂರ್ವಸ್ಥಿತಿಗೆ ತಂದರು.</verse>
				<verse number="14">ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಸರ್ವೇಶ್ವರನ ಆಲಯದಲ್ಲಿ ನಡೆವ ಆರಾಧನೆಗೆ ಹಾಗು ಬಲಿಯರ್ಪಣೆಗೆ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ, ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಸರ್ವೇಶ್ವರನ ಆಲಯದಲ್ಲಿ ಪ್ರತಿನಿತ್ಯವೂ ದಹನಬಲಿ ಸಮರ್ಪಣೆ ಆಗುತ್ತಿತ್ತು.</verse>
				<verse number="15">ಅವನು ಮುಪ್ಪಿನ ಮುದುಕನಾಗಿ ಮರಣಹೊಂದಿದನು. ಸಾಯುವಾಗ ಅವನಿಗೆ ನೂರಮೂವತ್ತು ವರ್ಷವಾಗಿತ್ತು.</verse>
				<verse number="16">ಅವನು ಇಸ್ರಯೇಲರ ವಿಷಯದಲ್ಲೂ ದೇವರ ಮತ್ತು ದೇವಾಲಯದ ವಿಷಯದಲ್ಲೂ ಹಲವಾರು ಸತ್ಕಾರ್ಯಗಳನ್ನು ಮಾಡಿದ್ದರಿಂದ ಅವನ ಶವವನ್ನು ದಾವೀದ ನಗರದೊಳಗೆ ರಾಜಸ್ಮಶಾನದಲ್ಲಿ ಸಮಾಧಿ ಮಾಡಿದರು.</verse>
				<verse number="17">ಯೆಹೋಯಾದನು ಮೃತನಾದ ಮೇಲೆ, ಜುದೇಯದ ಪದಾಧಿಕಾರಿಗಳು ಅರಸ ಯೆಹೋವಾಷನ ಬಳಿಗೆ ಬಂದು, ಅವನಿಗೆ ಅಡ್ಡಬಿದ್ದು ಅವನನ್ನು ಒಲಿಸಿಕೊಂಡರು.</verse>
				<verse number="18">ಅಂದಿನಿಂದ ಅವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನ ಆಲಯವನ್ನು ನಿರಾಕರಿಸಿ, ಅಶೇರ ಸ್ತಂಭಗಳನ್ನೂ ವಿಗ್ರಹಗಳನ್ನೂ ಪೂಜಿಸ ತೊಡಗಿದರು. ಅವರ ಈ ಅಪರಾಧದಿಂದ ಜುದೇಯದ ಮೇಲೂ ಜೆರುಸಲೇಮಿನ ಮೇಲೂ ದೈವಕೋಪ ಎರಗಿತು.</verse>
				<verse number="19">ಸರ್ವೇಶ್ವರ ಅವರನ್ನು ತಮ್ಮ ಕಡೆಗೆ ತಿರುಗಿಸಿಕೊಳ್ಳುವುದಕ್ಕಾಗಿ ಅವರ ಬಳಿಗೆ ಪ್ರವಾದಿಗಳನ್ನು ಕಳುಹಿಸಿದರು. ಇವರ ಮುಖಾಂತರ ಎಷ್ಟು ಎಚ್ಚರಿಸಿದರೂ ಅವರು ಕಿವಿಗೊಡಲಿಲ್ಲ.</verse>
				<verse number="20">ಆಗ ಯಾಜಕ ಯೆಹೋಯಾದನ ಮಗ ಜೆಕರ್ಯನುದೇವಾತ್ಮನಿಂದ ಆವೇಶ ಉಳ್ಳವನಾದನು. ಅವನು ಜನರ ಎದುರಿಗೆ ಉನ್ನತಸ್ಥಾನದಲ್ಲಿ ನಿಂತು, “ದೇವರ ಮಾತನ್ನು ಕೇಳಿರಿ; ನೀವೇಕೆ ಸರ್ವೇಶ್ವರನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ನಾಶಮಾಡಿಕೊಳ್ಳುತ್ತೀರಿ? ನೀವು ಸರ್ವೇಶ್ವರಸ್ವಾಮಿಯನ್ನು ಬಿಟ್ಟದ್ದರಿಂದ ಅವರೂ ನಿಮ್ಮನ್ನು ಬಿಟ್ಟುಬಿಟ್ಟಿದ್ದಾರೆ,” ಎಂದನು.</verse>
				<verse number="21">ಆಗ ಅವರು ಅವನಿಗೆ ವಿರೋಧವಾಗಿ ಒಳಸಂಚುಮಾಡಿ,ಸರ್ವೇಶ್ವರನ ಆಲಯದ ಪ್ರಾಕಾರದಲ್ಲಿ ಅವನನ್ನು ಕಲ್ಲೆಸೆದು ಕೊಂದರು. ಇದು ಅರಸ ಯೆಹೋವಾಷನ ಅಪ್ಪಣೆಯಿಂದಲೇ ಆಯಿತು.</verse>
				<verse number="22">ಜೆಕರ್ಯನ ತಂದೆ ಯೆಹೋಯಾದನಿಂದ ತನಗಾದ ಉಪಕಾರವನ್ನು ನೆನಪುಮಾಡಿಕೊಳ್ಳದೆ ಈ ಯೆಹೋವಾಷನು ಅವನ ಮಗನನ್ನು ಕೊಲ್ಲಿಸಿದನು. ಜೆಕರೀಯನು ಸಾಯುವಾಗ, “ಸರ್ವೇಶ್ವರಸ್ವಾಮಿಯೇ ಇದನ್ನು ನೋಡಿ ತಕ್ಕ ಶಾಸ್ತಿಮಾಡಲಿ,” ಎಂದನು.</verse>
				<verse number="23">ವರ್ಷಾಂತ್ಯದಲ್ಲಿ ಸಿರಿಯಾದ ಸೈನ್ಯ ಯೆಹೋವಾಷನ ಮೇಲೆ ದಾಳಿಮಾಡಲು ಹೊರಟಿತು. ಆ ಸೈನ್ಯದವರು ಜುದೇಯ ನಾಡಿನೊಳಗೆ ನುಗ್ಗಿ ಜೆರುಸಲೇಮಿಗೆ ಬಂದು, ಇಸ್ರಯೇಲರ ಎಲ್ಲ ಜನಾಧಿಪತಿಗಳನ್ನು ನಿರ್ನಾಮಮಾಡಿ ಅವರಲ್ಲಿ ಸಿಕ್ಕಿದ ಕೊಳ್ಳೆಯನ್ನೆಲ್ಲಾ ದಮಸ್ಕದ ಅರಸನಿಗೆ ಕಳುಹಿಸಿದರು.</verse>
				<verse number="24">ಸಿರಿಯಾದ ಸೈನ್ಯದಿಂದ ಬಂದ ಗುಂಪು ಚಿಕ್ಕದಾಗಿದ್ದರೂ ಯೆಹೂದ್ಯರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಟ್ಟುಬಿಟ್ಟದ್ದರಿಂದ ಶಿಕ್ಷೆಗೆ ಗುರಿಯಾದರು. ತಮ್ಮದು ಮಹಾಸೈನ್ಯವಾಗಿದ್ದರೂ ಸಿರಿಯಾದವರ ಕೈಯಲ್ಲಿ ಸೋಲನ್ನು ಅನುಭವಿಸಿದರು; ಯೆಹೋವಾಷನಿಗೆ ದಂಡನೆಯಾಯಿತು.</verse>
				<verse number="25">ಕಠಿಣವಾಗಿ ಗಾಯಗೊಂಡಿದ್ದ ಅವನನ್ನು ಸಿರಿಯಾದವರು ಬಿಟ್ಟುಹೋದರು. ಅವನ ಸೇವಕರೇ, ಯಾಜಕ ಯೆಹೋಯಾದನ ಮಗನ ವಧೆಯ ನಿಮಿತ್ತ, ಅವನಿಗೆ ವಿರೋಧವಾಗಿ ಒಳಸಂಚುಮಾಡಿ ಅವನನ್ನು ಹಾಸಿಗೆಯಲ್ಲೇ ಕೊಂದುಹಾಕಿದರು. ಅವನ ಶವವನ್ನು ದಾವೀದನಗರದೊಳಗೆ ಸಮಾಧಿಮಾಡಿದರು; ಆದರೆ ರಾಜಸ್ಮಶಾನದಲ್ಲಿ ಮಾಡಲಿಲ್ಲ.</verse>
				<verse number="26">ಅಮ್ಮೋನ್‍ದೇಶದ ಶಿಮ್ಯಾತೆಂಬಾಕೆಯ ಮಗ ಜಾಬಾದ್‍, ಮೋವಾಬ್‍ ದೇಶದ ಶಿಮ್ರೀತೆಂಬಾಕೆಯ ಮಗ ಯೆಹೋಜಾಬಾದ್ ಎಂಬವರೇ ಅವನಿಗೆ ವಿರೋಧವಾಗಿ ಒಳಸಂಚು ಮಾಡಿದವರು.</verse>
				<verse number="27">ಅವನ ಮಕ್ಕಳ ವಿವರ, ಅವನಿಗೆ ವಿರುದ್ಧ ಹೇಳಲಾದ ಅನೇಕ ದೈವೋಕ್ತಿಗಳು ಹಾಗು ದೇವಾಲಯದ ದುರಸ್ತಿಯ ವೃತ್ತಾಂತ ಇವು ರಾಜರ ಗ್ರಂಥದ ವ್ಯಾಖ್ಯಾನದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗ ಅಮಚ್ಯನು ಅರಸನಾದನು.</verse>
			</chapter>
			<chapter number="25">
				<verse number="1">ಅಮಚ್ಯನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಜೆರುಸಲೇಮಿನವಳಾದ ಯೆಹೋವದ್ಧಾನ್ ಎಂಬಾಕೆ ಅವನ ತಾಯಿ.</verse>
				<verse number="2">ಅವನು ಸರ್ವೇಶ್ವರನ ಚಿತ್ತಾನುಸಾರ ನಡೆದನು; ಆದರೆ ತದೇಕಚಿತ್ತದಿಂದಲ್ಲ.</verse>
				<verse number="3">ಅವನು ರಾಜ್ಯವನ್ನು ಭದ್ರಪಡಿಸಿಕೊಂಡ ಕೂಡಲೆ, ತನ್ನ ತಂದೆಯನ್ನು ಕೊಂದ ಸೇವಕರನ್ನು ಕೊಲ್ಲಿಸಿದನು.</verse>
				<verse number="4">ಆದರೆ ‘ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆ ಮಾಡಿದ ಪಾಪಕ್ಕೆ ಮಕ್ಕಳಿಗಾಗಲಿ ಮರಣ ಶಿಕ್ಷೆಯಾಗಬಾರದು; ಪ್ರತಿಯೊಬ್ಬನೂ ತನ್ನ ಪಾಪದ ಫಲವನ್ನು ತಾನೇ ಅನುಭವಿಸಬೇಕು’ ಎಂಬುದಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿರುವ ಸರ್ವೇಶ್ವರನ ಅಪ್ಪಣೆಯನ್ನು ನೆನಪುಮಾಡಿಕೊಂಡು, ಅವರ ಮಕ್ಕಳನ್ನು ಕೊಲ್ಲಿಸಲಿಲ್ಲ.</verse>
				<verse number="5">ಆಮೇಲೆ ಅಮಚ್ಯನು ಯೆಹೂದ್ಯರನ್ನು ಸಹಸ್ರಾಧಿಪತಿ ಹಾಗು ಶತಾಧಿಪತಿಗಳ ಕೈಕೆಳಗೆ ಒಟ್ಟುಗೂಡಿಸಿ, ಯೆಹೂದ ಮತ್ತು ಬೆನ್ಯಾಮೀನ್ ಕುಲಗಳ ಜನರನ್ನು ಆಯಾ ಗೋತ್ರಗಳ ಪ್ರಕಾರ ಅವರನ್ನು ನಿಲ್ಲಿಸಿ, ಇಪ್ಪತ್ತು ವರ್ಷದವರು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳವರನ್ನು ಲೆಕ್ಕಮಾಡಿಸಿದನು. ಅವರಲ್ಲಿ ಬರ್ಜಿ, ಗುರಾಣಿಗಳನ್ನು ಹಿಡಿದುಕೊಂಡು ಯುದ್ಧಕ್ಕೆ ಹೊರಡತಕ್ಕ ಶೂರರು ಮೂರು ಲಕ್ಷಮಂದಿ ಸಿಕ್ಕಿದರು.</verse>
				<verse number="6">ಇದಲ್ಲದೆ 3400 ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟು ಇಸ್ರಯೇಲರಿಂದಲೂ ಲಕ್ಷಮಂದಿ ಯೋಧರನ್ನು ತರಿಸಿದನು.</verse>
				<verse number="7">ಆಗ ದೈವಪುರುಷನೊಬ್ಬನು ಅವನ ಬಳಿಗೆ ಬಂದು, “ಅರಸರೇ, ಇಸ್ರಯೇಲ್ ಸೈನ್ಯದವರು ನಿಮ್ಮ ಜೊತೆಯಲ್ಲಿ ಯುದ್ಧಕ್ಕೆ ಹೋಗಬಾರದು. ಸರ್ವೇಶ್ವರ ಎಫ್ರಯಿಮರಾದ ಇಸ್ರಯೇಲರನ್ನೆಲ್ಲಾ ಕೈಬಿಟ್ಟಿದ್ದಾರೆ.</verse>
				<verse number="8">ನೀವೇ ಹೋಗಿ ಕಾರ್ಯವನ್ನು ನಿರ್ವಹಿಸಿರಿ. ಧೈರ್ಯದಿಂದ ಯುದ್ಧಮಾಡಿ. ಹಾಗೆ ಮಾಡದಿದ್ದರೆ ದೇವರು ಶತ್ರುಗಳಿಂದ ನಿಮ್ಮನ್ನು ಅಪಜಯಗೊಳಿಸುವರು. ಜಯಾಪಜಯಗಳನ್ನು ನೀಡಲು ಅವರು ಶಕ್ತರು ಆಗಿರುತ್ತಾರಲ್ಲವೆ?” ಎಂದನು.</verse>
				<verse number="9">ಅಮಚ್ಯನು ಆ ದೈವಪುರುಷನನ್ನು, “ಹಾಗಾದರೆ ನಾನು ಇಸ್ರಯೇಲ್ ಸೈನ್ಯಕ್ಕಾಗಿ 3400 ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟುಬಿಟ್ಟೆನಲ್ಲಾ, ಏನು ಮಾಡುವುದು?,” ಎಂದು ಕೇಳಿದನು. ಅವನು, “ಸರ್ವೇಶ್ವರ ಅದಕ್ಕಿಂತ ಎಷ್ಟೋ ಹೆಚ್ಚಾಗಿ ನಿಮಗೆ ಕೊಡಬಲ್ಲರು,” ಎಂದನು.</verse>
				<verse number="10">ಆಗ ಅಮಚ್ಯನು ಎಫ್ರಯಿಮರಿಂದ ಬಂದ ಸೈನಿಕರನ್ನು ಬೇರೆಮಾಡಿ, ಅವರನ್ನು ಅವರ ನಾಡಿಗೆ ಕಳುಹಿಸಿದನು. ಅವರು ಯೆಹೂದ್ಯರ ಮೇಲೆ ಕಡುಕೋಪಗೊಂಡು, ಬಲುಸಿಟ್ಟಿನಿಂದ ತಮ್ಮ ನಾಡಿಗೆ ಹೋದರು.</verse>
				<verse number="11">ಅಮಚ್ಯನಾದರೋ ಧೈರ್ಯದಿಂದ ತನ್ನ ಸೈನ್ಯವನ್ನು ಕರೆದುಕೊಂಡು, ಉಪ್ಪಿನ ಕಣಿವೆಗೆ ಹೋಗಿ, ಸೇಯೀರ್ಯರಲ್ಲಿ ಹತ್ತು ಸಾವಿರ ಮಂದಿಯನ್ನು ವಧಿಸಿದನು.</verse>
				<verse number="12">ಯೆಹೂದ್ಯರು ಬೇರೆ ಹತ್ತು ಸಾವಿರಮಂದಿಯನ್ನು ಜೀವಸಹಿತವಾಗಿ ಹಿಡಿದು, ಕಡಿದಾದ ಬಂಡೆಯ ತುದಿಗೆ ಒಯ್ದು, ಅವರೆಲ್ಲರೂ ಚೂರುಚೂರಾಗುವ ಹಾಗೆ ಅವರನ್ನು ಕೆಳಕ್ಕೆ ದೊಬ್ಬಿದರು.</verse>
				<verse number="13">ಅಷ್ಟರಲ್ಲಿ ಅಮಚ್ಯನು ತನ್ನ ಜೊತೆಯಲ್ಲಿ ಯುದ್ಧಕ್ಕೆ ಬರಬಾರದೆಂದು ಹಿಂದಕ್ಕೆ ಕಳುಹಿಸಿದ ಗುಂಪಿನವರು, ಸಮಾರಿಯಾಕ್ಕೂ ಬೇತ್ಹೋರೋನಿಗೂ ಮಧ್ಯದಲ್ಲಿರುವ ಜುದೇಯ ಪಟ್ಟಣಗಳ ಮೇಲೆ ದಾಳಿಮಾಡಿ, ಮೂರು ಸಾವಿರ ಜನರನ್ನು ಕೊಂದು, ದೊಡ್ಡ ಕೊಳ್ಳೆಯನ್ನು ಕೂಡಿಸಿಕೊಂಡು ಹೋದರು.</verse>
				<verse number="14">ಅಮಚ್ಯನು ಎದೋಮ್ಯರನ್ನು ಸೋಲಿಸಿ ಮನೆಗೆ ಬಂದ ಮೇಲೆ, ತಾನು ತೆಗೆದುಕೊಂಡು ಬಂದಿದ್ದ ಸೇಯೀರಿನವರ ದೇವತಾಪ್ರತಿಮೆಗಳನ್ನು ತನ್ನ ದೇವರುಗಳೆಂದು ನಿಲ್ಲಿಸಿ, ಅವುಗಳಿಗೆ ಅಡ್ಡಬಿದ್ದು ಧೂಪಾರತಿ ಎತ್ತುತ್ತಿದ್ದನು.</verse>
				<verse number="15">ಆಗ ಸರ್ವೇಶ್ವರ ಅಮಚ್ಯನ ಮೇಲೆ ಬಹಳವಾಗಿ ಕೋಪಗೊಂಡು, ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿ, “ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆಹೋದ ಅನ್ಯದೇವತೆಗಳಲ್ಲಿ ಏಕೆ ಇಷ್ಟು ಭಕ್ತಿ?” ಎಂದು ಹೇಳಿಸಿದರು.</verse>
				<verse number="16">ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು, “ನಿನ್ನನ್ನು ನಾನು ಆಲೋಚನಾಮಂತ್ರಿಯನ್ನಾಗಿ ನೇಮಿಸಲಿಲ್ಲ; ಬಾಯಿಮುಚ್ಚುವಿಯೋ: ಅಥವಾ ಏಟು ತಿನ್ನುವಿಯೋ?’ ಎಂದನು. ಅದಕ್ಕೆ ಅವನು, “ನೀವು ನನ್ನ ಬುದ್ಧಿವಾದವನ್ನು ಆಲಿಸದೆ ಹೀಗೆ ಮಾಡುವುದರಿಂದ ದೇವರು ನಿಮ್ಮನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾರೆಂದು ನಾನು ಬಲ್ಲೆ,” ಎಂದು ಹೇಳಿ ಸುಮ್ಮನಾದನು.</verse>
				<verse number="17">ಅನಂತರ ಜುದೇಯದ ಅರಸ ಅಮಚ್ಯನು ಸಮಾಲೋಚನೆ ನಡೆಸಿ, ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಇಸ್ರಯೇಲರ ಅರಸನೂ ಆದ ಯೋವಾಷನಿಗೆ, “ನಾವು ಒಬ್ಬರನ್ನೊಬ್ಬರು ಎದುರುಗೊಳ್ಳೋಣ,” ಎಂದು ದೂತರ ಮುಖಾಂತರ ಹೇಳಿಸಿದನು.</verse>
				<verse number="18">ಆಗ ಇಸ್ರಯೇಲರ ಅರಸ ಯೋವಾಷನು ಯೆಹೂದ್ಯರ ಅರಸ ಅಮಚ್ಯನಿಗೆ, “ಲೆಬನೋನಿನ ಒಂದು ಮುಳ್ಳುಗಿಡ ಅಲ್ಲಿನ ದೇವದಾರು ಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು’ ಎಂದು ಹೇಳಿಕಳುಹಿಸಿತು. ತುಸುಹೊತ್ತಾದ ಮೇಲೆ, ಲೆಬನೋನಿನ ಒಂದು ಕಾಡುಮೃಗ ಆ ಮಾರ್ಗವಾಗಿ ಹಾದುಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿದುಬಿಟ್ಟಿತು.</verse>
				<verse number="19">ಅಹಹ! ಎದೋಮ್ಯರನ್ನು ಸೋಲಿಸಿ ಬಹುಕೀರ್ತಿ ಪಡೆದುಕೊಂಡೆ ಎಂದು ನೀನು ಹೆಮ್ಮೆಗೊಂಡಿರುವೆ! ಸುಮ್ಮನೆ ಮನೆಯಲ್ಲಿ ಕುಳಿತುಕೊಳ್ಳಬಾರದೆ? ನನ್ನನ್ನು ಕೆಣಕಿ ನಿನಗೂ ನಿನ್ನ ರಾಜ್ಯಕ್ಕೂ ಏಕೆ ಕೇಡನ್ನು ತಂದುಕೊಳ್ಳುವೆ,” ಎಂದು ಉತ್ತರಕೊಟ್ಟನು.</verse>
				<verse number="20">ಅಮಚ್ಯನು ಆ ಮಾತನ್ನು ಲಕ್ಷಿಸಲಿಲ್ಲ; ಹಾಗಾಗಬೇಕೆಂದೇ ದೇವರ ಸಂಕಲ್ಪವಾಗಿತ್ತು. ಯೆಹೂದ್ಯರೂ ಎದೋಮ್ಯರ ದೇವತೆಗಳಲ್ಲಿ ಭಕ್ತಿಯನ್ನಿಟ್ಟದ್ದರಿಂದ ಅವರನ್ನು ಪರಾಧೀನ ಮಾಡಬೇಕೆಂದು ದೇವರು ನಿರ್ಣಯಿಸಿದ್ದರು.</verse>
				<verse number="21">ಇಸ್ರಯೇಲರ ಅರಸ ಯೋವಾಷನು ಯುದ್ಧಕ್ಕೆ ಹೊರಟನು; ಅವನೂ ಜುದೇಯದ ಅರಸ ಅಮಚ್ಯನೂ ಜುದೇಯ ಪ್ರಾಂತದ ಬೇತ್ಷೆಮೆಷಿನಲ್ಲಿ ಒಬ್ಬರನ್ನೊಬ್ಬರು ಎದುರುಗೊಂಡರು.</verse>
				<verse number="22">ಯೆಹೂದ್ಯರು ಇಸ್ರಯೇಲರಿಗೆ ಸೋತು ತಮ್ಮ ತಮ್ಮ ನಿವಾಸಗಳಿಗೆ ಓಡಿಹೋದರು.</verse>
				<verse number="23">ಇಸ್ರಯೇಲರ ಅರಸ ಯೋವಾಷನು, ಯೆಹೋವಹಾಜನ ಮೊಮ್ಮಗನೂ ಯೆಹೋವಾಷನ ಮಗನೂ ಜುದೇಯದ ಅರಸನೂ ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಸೆರೆಹಿಡಿದನು. ಅವನನ್ನು ಜೆರುಸಲೇಮಿಗೆ ಕರೆದುಕೊಂಡು ಬಂದು, ಎಫ್ರಯಿಮ್ ಬಾಗಿಲಿಗೂ ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಜೆರುಸಲೇಮಿನ ಗೋಡೆಯನ್ನು ಸುಮಾರು ಇನ್ನೂರು ಮೀಟರಿನಷ್ಟು ಕೆಡವಿಬಿಟ್ಟನು.</verse>
				<verse number="24">ಇದಲ್ಲದೆ, ಅವನು ಓಬೇದೆದೋಮನ ವಶದಲ್ಲಿದ್ದ ದೇವಾಲಯದ ಎಲ್ಲ ಬೆಳ್ಳಿಬಂಗಾರವನ್ನೂ ಪಾತ್ರೆಗಳನ್ನೂ ಅರಮನೆಯ ಭಂಡಾರಗಳಲ್ಲಿದ್ದುದೆಲ್ಲವನ್ನೂ ತೆಗೆದುಕೊಂಡು, ಹೊಣೆಗಾರರನ್ನಾಗಿ ಕೆಲವರನ್ನು ಸೆರೆಹಿಡಿದು ಸಮಾರಿಯಕ್ಕೆ ಹಿಂದಿರುಗಿದನು.</verse>
				<verse number="25">ಇಸ್ರಯೇಲರ ಅರಸನೂ ಯೆಹೋವಾಹಾಜನ ಮಗನೂ ಆದ ಯೋವಾಷನು ಸತ್ತ ನಂತರ, ಜುದೇಯದ ಅರಸ ಯೆಹೋವಾಷನ ಮಗ ಅಮಚ್ಯನು ಇನ್ನೂ ಹದಿನೈದು ವರ್ಷ ಬದುಕಿದ್ದನು.</verse>
				<verse number="26">ಉಳಿದ ಅವನ ಪೂರ್ವೋತ್ತರ ಚರಿತ್ರೆಯು ಯೆಹೂದ್ಯರ ಮತ್ತು ಇಸ್ರಯೇಲರ ರಾಜರ ಗ್ರಂಥದಲ್ಲಿ ಲಿಖಿತವಾಗಿದೆ.</verse>
				<verse number="27">ಅಮಚ್ಯನು ಸರ್ವೇಶ್ವರನ ಭಕ್ತಿಯನ್ನು ಬಿಟ್ಟಂದಿನಿಂದ ಜೆರುಸಲೇಮಿನವರು ಅವನಿಗೆ ವಿರುದ್ಧ ಒಳಸಂಚು ಮಾಡುತ್ತಿದ್ದರು. ಆದುದರಿಂದ ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಆಳುಗಳನ್ನು ಕಳುಹಿಸಿ ಅವನನ್ನು ಅಲ್ಲಿಯೇ ಕೊಲ್ಲಿಸಿದರು.</verse>
				<verse number="28">ಅವನ ಜನರು ಆ ಶವವನ್ನು ಕುದುರೆಯ ಮೇಲೆ ಜೆರುಸಲೇಮಿಗೆ ತಂದು, ಜುದೇಯದ ರಾಜಧಾನಿಯಲ್ಲಿ, ಅವನ ಪಿತೃ ಸ್ಮಶಾನದಲ್ಲಿ ಸಮಾಧಿಮಾಡಿದರು.</verse>
			</chapter>
			<chapter number="26">
				<verse number="1">ಅನಂತರ ಎಲ್ಲ ಯೆಹೂದ್ಯರೂ ಕೂಡಿ ಹದಿನಾರು ವರ್ಷದವನಾಗಿದ್ದ ಉಜ್ಜೀಯನನ್ನು ಅವನ ತಂದೆ ಅಮಚ್ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.</verse>
				<verse number="2">ಅರಸನು ಸತ್ತು ಪಿತೃಗಳ ಬಳಿಗೆ ಸೇರಿದ ಮೇಲೆ ಇವನು ಏಲೋತ್ ಪಟ್ಟಣವನ್ನು ಮತ್ತೆ ಜುದೇಯ ರಾಜ್ಯಕ್ಕೆ ಸೇರಿಸಿಕೊಂಡು ಭದ್ರಪಡಿಸಿದನು.</verse>
				<verse number="3">ಉಜ್ಜೀಯನು ಪಟ್ಟಕ್ಕೆ ಬಂದಾಗ ಅವನಿಗೆ ಹದಿನಾರು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಐವತ್ತ ಎರಡು ವರ್ಷ ಆಳಿದನು. ಜೆರುಸಲೇಮಿನವಳಾದ ಯೆಕೊಲ್ಯ ಎಂಬಾಕೆ ಅವನ ತಾಯಿ.</verse>
				<verse number="4">ಅವನು ತನ್ನ ತಂದೆ ಅಮಚ್ಯನಂತೆ ಸರ್ವೇಶ್ವರನ ಚಿತ್ತಾನುಸಾರವಾಗಿ ನಡೆದನು.</verse>
				<verse number="5">ದೇವಭಕ್ತಿಯನ್ನು ಬೋಧಿಸುತ್ತಿದ್ದ ಜೆಕರ್ಯನ ಜೀವಮಾನ ಕಾಲದಲ್ಲಿ ಅವನು ದೇವರನ್ನು ಅವಲಂಬಿಸಿದ್ದ ಕಾಲಾವಧಿಯಲ್ಲೇ ದೇವರಾದ ಸರ್ವೇಶ್ವರ ಅವನನ್ನು ಅಭಿವೃದ್ಧಿಗೆ ತಂದದ್ದು.</verse>
				<verse number="6">ಉಜ್ಜೀಯನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೊರಟು ಗತ್‍ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.</verse>
				<verse number="7">ಫಿಲಿಷ್ಟಿಯರೊಡನೆ ಗೂರ್‍ಬಾಳಿನಲ್ಲಿರುವ ಅರೇಬಿಯರೊಡನೆ ಹಾಗು ಮೆಗೂನ್ಯರೊಡನೆ ಯುದ್ಧಮಾಡುವಾಗ ಅವನಿಗೆ ದೇವರ ಸಹಾಯ ದೊರೆಯಿತು.</verse>
				<verse number="8">ಅಮ್ಮೋನಿಯರೂ ಉಜ್ಜೀಯನಿಗೆ ಕಪ್ಪವನ್ನು ಕೊಡುತ್ತಿದ್ದರು. ಅವನು ಅಧಿಕ ಬಲ ಉಳ್ಳವನಾಗಿ ಅವನ ಹೆಸರು ಈಜಿಪ್ಟಿನ ಗಡಿಗಳವರೆಗೂ ಹಬ್ಬಿತು.</verse>
				<verse number="9">ಉಜ್ಜೀಯನು ಜೆರುಸಲೇಮಿನಲ್ಲಿ ಮೂಲೆ ಬಾಗಿಲು, ತಗ್ಗಿನ ಬಾಗಿಲು, ಗೋಡೆ ತಿರುಗುವ ಭಾಗ, ಇವುಗಳ ಮೇಲೆ ಬುರುಜುಗಳನ್ನು ಕಟ್ಟಿಸಿ ಭದ್ರಗೊಳಿಸಿದನು.</verse>
				<verse number="10">ಅವನಿಗೆ ಇಳಕಲಿನ ಪ್ರದೇಶದಲ್ಲೂ ತಪ್ಪಲ ಸೀಮೆಯಲ್ಲೂ ಅಲ್ಲದೆ ಅಡವಿಯಲ್ಲೂ ಪಶುಪ್ರಾಣಿಗಳ ದೊಡ್ಡಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಹಲವು ಬಾವಿಗಳನ್ನು ತೋಡಿಸಿದನು. ವ್ಯವಸಾಯದಲ್ಲಿ ಅವನಿಗೆ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿತೋಟಗಳ ಕೆಲಸಗಾರರನ್ನು ನೇಮಿಸಿದನು.</verse>
				<verse number="11">ಇದಲ್ಲದೆ, ಯುದ್ಧಕ್ಕೆ ಬೇಕಾದ ಸೈನ್ಯವೂ ಉಜ್ಜೀಯನಿಗಿತ್ತು. ಲೇಖಕನಾದ ಯೆಗೀಯೇಲ್, ಅಧಿಕಾರಿಯಾದ ಮಾಸೇಯ, ಇವರು ಅರಸನ ಸರದಾರರಲ್ಲಿ ಒಬ್ಬನಾದ ಹನನ್ಯನ ಆಜ್ಞಾನುಸಾರ, ಅವನ ಪಟ್ಟಿಯನ್ನು ಬರೆದಿದ್ದರು. ಆಯಾ ಗುಂಪುಗಳು ಪಟ್ಟಿಯ ಕ್ರಮಾನುಸಾರ ಯುದ್ಧಕ್ಕೆ ಹೊರಡುತ್ತಿದ್ದವು.</verse>
				<verse number="12">ರಣವೀರರು ಆಗಿದ್ದ ಎಲ್ಲ ಗೋತ್ರಪ್ರಧಾನರ ಸಂಖ್ಯೆ ಎರಡು ಸಾವಿರದ ಆರುನೂರು.</verse>
				<verse number="13">ಇವರ ಕೈಕೆಳಗಿದ್ದ ಯೋಧರ ಸಂಖ್ಯೆ, ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದು, ಅವನ ವೈರಿಗಳಿಗೆ ವಿರುದ್ಧ, ಪರಾಕ್ರಮದಿಂದ ಯುದ್ಧ ಮಾಡುತ್ತಿದ್ದರು.</verse>
				<verse number="14">ಉಜ್ಜೀಯನು ಈ ಎಲ್ಲ ಸೈನ್ಯದವರಿಗೆ ಬೇಕಾದ ಗುರಾಣಿ, ಬರ್ಜಿ, ಶಿರಸ್ತ್ರಾಣ, ಕವಚ, ಬಿಲ್ಲು, ಕವಣೆಯಕಲ್ಲು ಇವುಗಳನ್ನು ಒದಗಿಸಿಕೊಟ್ಟನು.</verse>
				<verse number="15">ಇದಲ್ಲದೆ, ಅವನು ಬಾಣಗಳನ್ನೂ ದೊಡ್ಡ ಕಲ್ಲುಗಳನ್ನೂ ಎಸೆಯುವುದಕ್ಕಾಗಿ, ತಜ್ಞರ ಕಲ್ಪನೆಯ ಮೇರೆಗೆ ಯಂತ್ರಗಳನ್ನು ಮಾಡಿಸಿ, ಅವುಗಳನ್ನು ಜೆರುಸಲೇಮಿನ ಬುರುಜುಗಳ ಮೇಲೆಯೂ ಆಳುವೇರಿಗಳ ಮೇಲೆಯೂ ಇಡಿಸಿದ್ದನು. ಬಲಿಷ್ಠನಾಗುವವರೆಗೂ ಅವನ ದೇವರ ಸಹಾಯವನ್ನು ಆಶ್ಚರ್ಯಕರವಾದ ರೀತಿಯಲ್ಲಿ ಪಡೆಯುತ್ತಿದ್ದನು; ಅವನ ಕೀರ್ತಿ ಬಲು ದೂರದವರೆಗೆ ಹಬ್ಬಿತ್ತು.</verse>
				<verse number="16">ಆದರೆ ಅವನು ಬಲಿಷ್ಠನಾದ ಮೇಲೆ, ಗರ್ವಿಷ್ಠನೂ ಭ್ರಷ್ಠನೂ ಆದನು. ತನ್ನ ದೇವರಾದ ಸರ್ವೇಶ್ವರನಿಗೆ ದ್ರೋಹಿಯಾಗಿ, ಧೂಪವೇದಿಯ ಮೇಲೆ ತಾನೇ ಧೂಪಾರತಿ ಎತ್ತಬೇಕೆಂದು ಸರ್ವೇಶ್ವರನ ಆಲಯದ ಒಳಕ್ಕೆ ಹೋದನು.</verse>
				<verse number="17">ಆಗ ಮಹಾಯಾಜಕ ಅಜರ್ಯನು ಹಾಗು ಧೈರ್ಯಶಾಲಿಗಳಾದ ಎಂಬತ್ತು ಮಂದಿ ಇತರ ಯಾಜಕರು, ಅರಸ ಉಜ್ಜೀಯನ ಹಿಂದೆಯೇ ಹೋಗಿ ಅವನೆದುರಿಗೆ ನಿಂತು,</verse>
				<verse number="18">“ಉಜ್ಜೀಯರೇ, ಸರ್ವೇಶ್ವರನಿಗೆ ಧೂಪಾರತಿ ಎತ್ತುವುದು ನಿಮ್ಮ ಕೆಲಸವಲ್ಲ; ಅದಕ್ಕೆ ಆರೋನನ ಸಂತಾನದವರ ಯಾಜಕರು ಪ್ರತಿಷ್ಠಿತರಾಗಿದ್ದಾರೆ. ಪವಿತ್ರಾಲಯವನ್ನು ಬಿಟ್ಟು ಹೋಗಿ; ನೀವು ಮಾಡುತ್ತಿರುವುದು ದ್ರೋಹ. ಇದಕ್ಕೆ ದೇವರಾದ ಸರ್ವೇಶ್ವರನಿಂದ ನಿಮಗೆ ಮರ್ಯಾದೆ ದೊರಕಲಾರದು,” ಎಂದರು.</verse>
				<verse number="19">ಧೂಪಾರತಿ ಎತ್ತಬೇಕೆಂದು ಕೈಯಲ್ಲಿ ಧೂಪಕಳಸ ವನ್ನು ಹಿಡಿದಿದ್ದ ಉಜ್ಜೀಯನು ಕೋಪಗೊಂಡನು. ಸರ್ವೇಶ್ವರನ ಆಲಯದ ಧೂಪವೇದಿಯ ಬಳಿಯಲ್ಲಿ ನಿಂತು, ಯಾಜಕ ರೊಡನೆ ಅವನು ಸಿಟ್ಟಿನಿಂದ ಮಾತಾಡುತ್ತಿರುವಾಗಲೆ ಯಾಜಕರ ಸಮಕ್ಷಮದಲ್ಲೇ, ಅವನ ಹಣೆಯಲ್ಲಿ ಕುಷ್ಠ ಹುಟ್ಟಿತು.</verse>
				<verse number="20">ಮಹಾಯಾಜಕನಾದ ಅಜರ್ಯನೂ ಎಲ್ಲ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಠ ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಗಟ್ಟಿದರು. ಸರ್ವೇಶ್ವರ, ತನ್ನನ್ನು ದಂಡಿಸಿದ್ದಾರೆಂದು ಅವನಿಗೆ ತಿಳಿಯಿತು. ಎಂದೇ ಅವನು ಶೀಘ್ರವಾಗಿ ಹೊರಗೆಹೋದನು.</verse>
				<verse number="21">ಉಜ್ಜೀಯನು ಜೀವದಿಂದಿರುವವರೆಗೂ ಕುಷ್ಠರೊಗಿಯಾಗಿದ್ದು, ಸರ್ವೇಶ್ವರನ ಆಲಯಕ್ಕೆ ಬಾರದಂತೆ ಬಹಿಷ್ಕೃತನಾದನು. ಕುಷ್ಠದ ನಿಮಿತ್ತ ಅವನು ಪ್ರತ್ಯೇಕವಾದ ಮನೆಯಲ್ಲಿ ವಾಸಿಸಬೇಕಾಯಿತು. ರಾಜಗೃಹಾಧಿಪತ್ಯವನ್ನೂ ಪ್ರಜಾಪಾಲನೆಯನ್ನೂ ಅವನ ಮಗ ಯೋತಾಮನು ನೋಡಿಕೊಳ್ಳುತ್ತಿದ್ದನು.</verse>
				<verse number="22">ಉಜ್ಜೀಯನ ಉಳಿದ ಪೂರ್ವೋತ್ತರ ಚರಿತ್ರೆಯನ್ನು ಆಮೋಚನ ಮಗ ಯೆಶಾಯನೆಂಬ ಪ್ರವಾದಿ ಬರೆದಿದ್ದಾನೆ.</verse>
				<verse number="23">ಉಜ್ಜೀಯನು ಸತ್ತು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಕುಷ್ಠರೋಗಿಯದೆಂದು, ರಾಜಕುಟುಂಬ ಸ್ಮಶಾನವಿದ್ದ ಹೊಲದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಯೋತಾಮನು ಅರಸನಾದನು.</verse>
			</chapter>
			<chapter number="27">
				<verse number="1">ಯೋತಾಮನು ಪಟ್ಟಕ್ಕೆ ಬಂದಾಗ ಅವನಿಗೆ ಇಪ್ಪತ್ತೈದು ವರ್ಷ. ಅವನು ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷ ಎಂಬಾಕೆ ಇವನ ತಾಯಿ.</verse>
				<verse number="2">ತನ್ನ ತಂದೆಯಾದ ಉಜ್ಜೀಯನಂತೆ ಇವನು ಸರ್ವೇಶ್ವರನ ಚಿತ್ತಾನುಸಾರ ನಡೆದನು; ಆದರೆ ಅವನಂತೆ ಸರ್ವೇಶ್ವರನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು.</verse>
				<verse number="3">ಸರ್ವೇಶ್ವರನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿ ಓಫೇಲ್ ಗೋಡೆಯ ಹೆಚ್ಚಿನ ಭಾಗವನ್ನು ಕಟ್ಟಿಸಿದವನು ಇವನೇ.</verse>
				<verse number="4">ಇದಲ್ಲದೆ, ಇವನು ಜುದೇಯ ಪರ್ವತಪ್ರದೇಶದಲ್ಲಿ ಪಟ್ಟಣಗಳನ್ನೂ ಕಾಡುಗಳಲ್ಲಿ ದುರ್ಗಗಳನ್ನೂ ಬುರುಜುಗಳನ್ನೂ ಕಟ್ಟಿಸಿದನು.</verse>
				<verse number="5">ಅಮ್ಮೋನಿಯರ ಅರಸನೊಡನೆ ಯುದ್ಧಮಾಡಿ ಅವರ ಮೇಲೆ ಜಯಗಳಿಸಿದನು; ಅಮ್ಮೋನಿಯರು ಆ ವರ್ಷದಲ್ಲಿ ಇವನಿಗೆ 3,400 ಕಿಲೋಗ್ರಾಂ ಬೆಳ್ಳಿ, 1000 ಮೆಟ್ರಿಕ್ ಟನ್ ಗೋದಿ, 100 ಮೆಟ್ರಿಕ್ ಟನ್ ಜವೆಗೋದಿ ಇವುಗಳನ್ನು ಕೊಡಬೇಕಾಯಿತು. ಅಮ್ಮೋನಿಯರು ಅವನಿಗೆ ಎರಡನೆಯ ಮತ್ತು ಮೂರನೆಯ ವರ್ಷಗಳಲ್ಲಿಯೂ ಹೀಗೆಯೇ ಕೊಟ್ಟರು.</verse>
				<verse number="6">ಯೋತಾಮನು ತನ್ನ ದೇವರಾದ ಸರ್ವೇಶ್ವರನ ಚಿತ್ತಾನುಸಾರ ನಡೆದುಕೊಂಡಿದ್ದರಿಂದ ಶಕ್ತಿಶಾಲಿ ಆದನು.</verse>
				<verse number="7">ಯೋತಾಮನ ಉಳಿದ ಚರಿತ್ರೆ ಅವನ ಯುದ್ಧಗಳು ಹಾಗು ಪ್ರವರ್ತನೆಗಳು ಇಸ್ರಯೇಲರ ಮತ್ತು ಯೆಹೂದ್ಯರ ರಾಜಗ್ರಂಥದಲ್ಲಿ ದಾಖಲಾಗಿರುತ್ತವೆ.</verse>
				<verse number="8">ಅವನು ತನ್ನ ಇಪ್ಪತ್ತೈದನೆಯ ವರ್ಷ ತುಂಬಿದ ಮೇಲೆ ಪಟ್ಟಕ್ಕೆ ಬಂದು ಜೆರುಸಲೇಮಿನಲ್ಲಿ ಹದಿನಾರು ವರ್ಷ ಆಳಿದನು.</verse>
				<verse number="9">ಮೃತನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಅಹಾಜನು ಅರಸನಾದನು.</verse>
			</chapter>
			<chapter number="28">
				<verse number="1">ಅಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರ್ಷದವನಾಗಿದ್ದನು. ಜೆರುಸಲೇಮಿನಲ್ಲಿ ಅವನು ಹದಿನಾರು ವರ್ಷ ಆಳಿದನು. ಸರ್ವೇಶ್ವರನ ಚಿತ್ತಾನುಸಾರ ಅವನು ನಡೆಯಲಿಲ್ಲ.</verse>
				<verse number="2">ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟು, ಇಸ್ರಯೇಲ್ ರಾಜರ ಮಾರ್ಗದಲ್ಲಿ ನಡೆದು, ಅವರಂತೆ ಬಾಳ್‍ದೇವರುಗಳ ಎರಕದ ವಿಗ್ರಹಗಳನ್ನು ಮಾಡಿಸಿದನು.</verse>
				<verse number="3">ಅವನು ಬೆನ್‍ಹಿನ್ನೋಮ್ ಎಂಬ ಕಣಿವೆಯಲ್ಲಿ ಧೂಪ ಹಾಕಿಸಿದ್ದಲ್ಲದೆ ಸರ್ವೇಶ್ವರಸ್ವಾಮಿ ಇಸ್ರಯೇಲರ ನಾಡಿನಿಂದ ಓಡಿಸಿಬಿಟ್ಟ ಜನಾಂಗಗಳ ಅಸಹ್ಯಕಾರ್ಯಗಳನ್ನು ಅನುಸರಿಸಿ ತನ್ನ ಮಕ್ಕಳನ್ನು ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದ್ದನು.</verse>
				<verse number="4">ಪೂಜಾಸ್ಥಳಗಳಲ್ಲೂ, ದಿನ್ನೆಗಳ ಮೇಲೂ ಹಾಗು ಎಲ್ಲ ಹಸಿರು ಮರಗಳ ಕೆಳಗೂ ಬಲಿಗಳನ್ನೂ ಧೂಪಗಳನ್ನೂ ಸಮರ್ಪಿಸುತ್ತಿದ್ದನು.</verse>
				<verse number="5">ಈ ಕಾರಣ ದೇವರಾದ ಸರ್ವೇಶ್ವರ ಅಹಾಜನನ್ನು ಸಿರಿಯಾದ ಅರಸನ ಕೈಗೆ ಒಪ್ಪಿಸಿದನು. ಸಿರಿಯಾದವರು ಅವನನ್ನು ಸೋಲಿಸಿ ಅವನ ಜನರಲ್ಲಿ ದೊಡ್ಡ ಗುಂಪನ್ನು ಸೆರೆಹಿಡಿದು ದಮಸ್ಕಕ್ಕೆ ಒಯ್ದರು. ಇದಲ್ಲದೆ, ಅವನು ಇಸ್ರಯೇಲ್ ರಾಜನ ಕೈವಶವಾಗಿ ಅವನಿಂದಲೂ ಪೂರ್ಣವಾಗಿ ಅಪಜಯ ಹೊಂದಿದನು.</verse>
				<verse number="6">ರೆಮಲ್ಯನ ಮಗ ಪೆಕಹ ಎಂಬವನು ಒಂದೇ ದಿವಸ ಯೆಹೂದ್ಯರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಲ್ಲಿಸಿದನು. ಇವರೆಲ್ಲರು ರಣವೀರರು. ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಬಿಟ್ಟದ್ದೇ ಇದಕ್ಕೆ ಕಾರಣವಾಗಿತ್ತು.</verse>
				<verse number="7">ರಾಜಪುತ್ರನಾದ ಮಾಸೇಯ, ರಾಜಗೃಹಾಧಿಪತಿಯಾದ ಅಜ್ರೀಕಾಮ್, ರಾಜಪ್ರತಿನಿಧಿಯಾದ ಎಲ್ಕಾನ ಎಂಬವರನ್ನು ಎಫ್ರಯಿಮ್ ನಾಡಿನ ಜಿಕ್ರಿಯೆಂಬ ಶೂರನು ಕೊಂದನು.</verse>
				<verse number="8">ಇದಲ್ಲದೆ, ಇಸ್ರಯೇಲರು ತಮ್ಮ ಬಂಧುಗಳಾದ ಯೆಹೂದ್ಯರಲ್ಲಿ ಎರಡು ಲಕ್ಷ ಮಂದಿ ಹೆಂಗಸರನ್ನೂ ಗಂಡು ಹೆಣ್ಣು ಮಕ್ಕಳನ್ನೂ ಸೆರೆಹಿಡಿದು, ದೊಡ್ಡ ಕೊಳ್ಳೆಯನ್ನೂ ಕೂಡಿಸಿಕೊಂಡು, ಸಮಾರಿಯಕ್ಕೆ ಒಯ್ದರು.</verse>
				<verse number="9">ಸಮಾರಿಯದಲ್ಲಿ ಸರ್ವೇಶ್ವರನ ಒಬ್ಬ ಪ್ರವಾದಿ ಇದ್ದನು. ಅವನ ಹೆಸರು ಓದೇದ್. ಅವನು ಸಮಾರಿಯಕ್ಕೆ ಬರುತ್ತಿದ್ದ ಸೈನ್ಯದವರನ್ನು ಎದುರುಗೊಂಡು, “ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟರು. ಅವರನ್ನು ಸಂಹರಿಸುವುದರಲ್ಲಿ ನಿಮ್ಮ ರೌದ್ರ ಆಕಾಶವನ್ನು ಮುಟ್ಟಿತು.</verse>
				<verse number="10">ಇದೂ ಸಾಲದೆಂದು ನೀವು ಯೆಹೂದ್ಯರನ್ನೂ ಜೆರುಸಲೇಮನ್ನೂ ಬಲಾತ್ಕರಿಸಿ ದಾಸದಾಸಿಯರನ್ನಾಗಿಯೂ ಮಾಡಿಕೊಳ್ಳಬೇಕೆಂದಿದ್ದೀರಿ. ನಿಮ್ಮ ದೇವರಾದ ಸರ್ವೇಶ್ವರನಿಗೆ ವಿರುದ್ಧ ಅಪರಾಧಗಳನ್ನು ನೀವೂ ಮಾಡಿದ್ದೀರಲ್ಲವೆ?</verse>
				<verse number="11">ಈಗ ನೀವು ನನ್ನ ಮಾತಿಗೆ ಕಿವಿಗೊಟ್ಟು ನಿಮ್ಮ ಸಹೋದರರಿಂದ ಸೆರೆಯಾಗಿ ತಂದವರನ್ನು ಹಿಂದಕ್ಕೆ ಕಳುಹಿಸಿರಿ; ಸರ್ವೇಶ್ವರನ ಕೋಪಾಗ್ನಿ ನಿಮ್ಮ ಮೇಲೆ ಉರಿಯುತ್ತಾ ಇದೆ!” ಎಂದನು.</verse>
				<verse number="12">ಆಗ ಎಫ್ರಯಿಮರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗ ಅಜರ್ಯ, ಮೆಷಿಲ್ಲೇಮೋತನ ಮಗ ಬೆರೆಕ್ಯ, ಶಲ್ಲೂಮನ ಮಗ ಹಿಜ್ಕೀಯ, ಹದ್ಲೈಯನ ಮಗ ಅಮಾಸ ಎಂಬವರು ಯುದ್ಧದಿಂದ ಬರುತ್ತಿದ್ದವರ ಮುಂದೆ ನಿಂತು,</verse>
				<verse number="13">“ನೀವು ಸೆರೆಹಿಡಿದವರನ್ನು ಇಲ್ಲಿಗೆ ತರಬೇಡಿ; ನೀವು ನಮ್ಮ ಪಾಪಾಪರಾಧಗಳ ಜೊತೆಗೆ ಸರ್ವೇಶ್ವರನಿಗೆ ವಿರುದ್ಧ ಮತ್ತೊಂದು ಅಪರಾಧವನ್ನು ಸೇರಿಸಬೇಕೆಂದಿರುತ್ತೀರೋ? ನಮ್ಮ ಅಪರಾಧ ದೊಡ್ಡದು; ಇಸ್ರಯೇಲರ ಮೇಲಿರುವ ದೈವಕೋಪ ಉಗ್ರವಾಗಿದೆ!” ಎಂದು ಹೇಳಿದರು.</verse>
				<verse number="14">ಯೋಧರು ಇದನ್ನು ಕೇಳಿ ಸೆರೆಯವರನ್ನೂ ಕೊಳ್ಳೆಯನ್ನೂ ಅಧಿಪತಿಗಳ ಮತ್ತು ಸಮೂಹದವರ ಮುಂದೆಯೇ ಬಿಟ್ಟುಬಿಟ್ಟರು.</verse>
				<verse number="15">ಆಗ ಮೇಲೆ ಹೇಳಿದ ಪುರುಷರು ಎದ್ದುಬಂದು ಸೆರೆಯವರಲ್ಲಿ ಬೆತ್ತಲೆಯಾದವರೆಲ್ಲರಿಗೆ ಕೊಳ್ಳೆಯಿಂದ ಬಂದ ಬಟ್ಟೆಗಳನ್ನೂ, ಕಾಲಿಗೆ ಕೆರಗಳನ್ನೂ ಕೊಟ್ಟರು; ಅನ್ನಪಾನಗಳನ್ನಿತ್ತು, ತೈಲಹಚ್ಚಿದರು; ಬಳಲಿಹೋದವರನ್ನು ಕತ್ತೆಗಳ ಮೇಲೆ ಕುಳ್ಳಿರಿಸಿ, ಎಲ್ಲರನ್ನೂ ಜೆರಿಕೋ ಎಂಬ ಖರ್ಜೂರ ನಗರಕ್ಕೆ ಕರೆದುಕೊಂಡು ಹೋದರು; ಅಲ್ಲಿ ಅವರ ಬಂಧುಗಳ ಹತ್ತಿರ ಬಿಟ್ಟು, ಸಮಾರಿಯಕ್ಕೆ ಹಿಂದಿರುಗಿದರು.</verse>
				<verse number="16">ಆ ಕಾಲದಲ್ಲಿ ಅರಸ ಅಹಾಜನು ತನಗೆ ಸಹಾಯ ಮಾಡಬೇಕೆಂದು ಅಸ್ಸೀರಿಯದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು.</verse>
				<verse number="17">ಏಕೆಂದರೆ ಎದೋಮ್ಯರು ಯೆಹೂದ್ಯರ ಮೇಲೆ ಮರಳಿ ಯುದ್ಧಕ್ಕೆ ಬಂದು ಅವರನ್ನು ಸೋಲಿಸಿ ಅನೇಕ ಜನರನ್ನು ಸೆರೆಗೊಯ್ದಿದ್ದರು.</verse>
				<verse number="18">ಫಿಲಿಷ್ಟಿಯರು ಜುದೇಯದ ಇಳಕಲಿನ ಪ್ರದೇಶದ ಮತ್ತು ದಕ್ಷಿಣಪ್ರಾಂತದ ಪಟ್ಟಣಗಳ ಮೇಲೆ ದಾಳಿಮಾಡಿ ಬೇತ್ಷೆಮೆಷ್, ಅಯ್ಯಾಲೋನ್, ಗೆದೇರೋತ್ ಇವುಗಳನ್ನೂ ಸೋಕೋ, ತಿಮ್ನಾ, ಗಿಮ್ಜೋ ಇವುಗಳನ್ನೂ ಇವುಗಳಿಗೆ ಸೇರಿದ ಗ್ರಾಮಗಳನ್ನೂ ಸ್ವಾಧೀನಮಾಡಿಕೊಂಡು ಅವುಗಳಲ್ಲಿ ವಾಸವಾಗಿ ಇದ್ದರು.</verse>
				<verse number="19">ಯೆಹೂದ್ಯರನ್ನು ಅಧರ್ಮಕ್ಕೆ ಪ್ರಚೋದಿಸಿ ಸರ್ವೇಶ್ವರನಿಗೆ ದ್ರೋಹಮಾಡಿದ ಇಸ್ರಯೇಲ ಅರಸ ಅಹಾಜನ ನಿಮಿತ್ತ ಸರ್ವೇಶ್ವರ ಯೆಹೂದ್ಯರನ್ನು ಈ ಪ್ರಕಾರ ತಗ್ಗಿಸಿದ್ದರು.</verse>
				<verse number="20">ಅಸ್ಸೀರಿಯದ ಅರಸ ತಿಲ್ಗತ್ಪಿಲ್ನೆಸರನು ಬಂದು, ಅವನಿಗೆ ನೆರವಾಗುವುದಕ್ಕೆ ಬದಲಾಗಿ ಅವನು ತಲೆತಗ್ಗಿಸುವಂತೆ ಮಾಡಿದ್ದನು.</verse>
				<verse number="21">ಅಹಾಜನು, ಸರ್ವೇಶ್ವರನ ಆಲಯದ ಹಾಗು ಅರಮನೆಯ ಅಧಿಪತಿಗಳ ಆಸ್ತಿಯನ್ನು ಸೂರೆಮಾಡಿಕೊಂಡು ಹೋಗಿ, ಅಸ್ಸೀರಿಯದ ಅರಸನಿಗೆ ಕಾಣಿಕೆಯನ್ನಾಗಿ ಕೊಟ್ಟರೂ ಅವನಿಂದ ಏನೂ ಸಹಾಯವಾಗಲಿಲ್ಲ.</verse>
				<verse number="22">ಕಷ್ಟಬಂದಾಗ ಅರಸ ಅಹಾಜನು ಸರ್ವೇಶ್ವರನಿಗೆ ಮತ್ತಷ್ಟು ದ್ರೋಹಮಾಡಿದನು.</verse>
				<verse number="23">ಹೇಗೆಂದರೆ, ‘ಸಿರಿಯಾ ರಾಜರ ದೇವತೆಗಳು ಅವರಿಗೆ ಜಯವನ್ನನುಗ್ರಹಿಸಿವೆ; ಅಂತೆಯೇ ನಾನೂ ಅವುಗಳಿಗೆ ಬಲಿಸಮರ್ಪಿಸಿದರೆ ನನಗೂ ಜಯವಾಗುವುದು’, ಎಂದುಕೊಂಡನು; ಅವನು ತನ್ನ ಅಪಜಯಕ್ಕೆ ಕಾರಣವಾಗಿದ್ದ ದಮಸ್ಕದ ದೇವತೆಗಳಿಗೆ ಬಲಿಕೊಟ್ಟನು. ಆದರೆ ಆ ದೇವತೆಗಳಿಂದ ಅವನಿಗೂ ಎಲ್ಲ ಇಸ್ರಯೇಲರಿಗೂ ಕೇಡು ಉಂಟಾಯಿತು.</verse>
				<verse number="24">ಇದಲ್ಲದೆ, ಅಹಾಜನು ದೇವಾಲಯದ ಸಾಮಗ್ರಿಗಳನ್ನು ಕೂಡಿಸಿ, ಅವುಗಳನ್ನು ಚೂರುಚೂರು ಮಾಡಿಬಿಟ್ಟನು; ಸರ್ವೇಶ್ವರನ ಆಲಯದ ಬಾಗಿಲುಗಳನ್ನು ಮುಚ್ಚಿ ಜೆರುಸಲೇಮಿನ ಪ್ರತಿಯೊಂದು ಮೂಲೆಯಲ್ಲೂ ಯಜ್ಞವೇದಿಗಳನ್ನು ಕಟ್ಟಿಸಿದನು.</verse>
				<verse number="25">ಅನ್ಯದೇವತೆಗಳಿಗೆ ಧೂಪಹಾಕುವುದಕ್ಕಾಗಿ ಜುದೇಯದ ಎಲ್ಲ ಪಟ್ಟಣಗಳಲ್ಲೂ ಪೂಜಾಸ್ಥಳಗಳನ್ನು ನಿರ್ಮಿಸಿದನು. ಹೀಗೆ ತನ್ನ ಪಿತೃಗಳ ದೇವರಾದ ಸರ್ವೇಶ್ವರನನ್ನು ರೇಗಿಸಿದನು.</verse>
				<verse number="26">ಅಹಾಜನ ಉಳಿದ ಪೂರ್ವೋತ್ತರ ಚರಿತ್ರೆ ಹಾಗು ಅವನ ಎಲ್ಲ ಪ್ರವರ್ತನೆಗಳು ಯೆಹೂದ್ಯರ ಮತ್ತು ಇಸ್ರಯೇಲರ ರಾಜಗ್ರಂಥದಲ್ಲಿ ಲಿಖಿತವಾಗಿವೆ.</verse>
				<verse number="27">ಅವನು ಸತ್ತು ತನ್ನ ಪಿತೃಗಳ ಬಳಿಗೆ ಸೇರಲು ಅವನನ್ನು ಇಸ್ರಯೇಲ್ ರಾಜಸ್ಮಶಾನದಲ್ಲಿ ಹೂಣದೆ ಜೆರುಸಲೇಮ್ ಪಟ್ಟಣದೊಳಗಿನ ಒಂದು ಸ್ಥಳದಲ್ಲಿ ಹೂಣಿಟ್ಟರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು.</verse>
			</chapter>
			<chapter number="29">
				<verse number="1">ಹಿಜ್ಕೀಯನು ಪಟ್ಟಕ್ಕೆ ಬಂದಾಗ ಅವನಿಗೆ ಇಪ್ಪತ್ತೈದು ವರ್ಷ ಪ್ರಾಯ. ಅವನು ಜೆರುಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಜೆಕರ್ಯನ ಮಗಳಾದ ಅಬೀಯ ಎಂಬಾಕೆ ಅವನ ತಾಯಿ.</verse>
				<verse number="2">ಅವನು ಎಲ್ಲಾ ವಿಷಯಗಳಲ್ಲೂ ತನ್ನ ಪೂರ್ವಜ ದಾವೀದನಂತೆ ಸರ್ವೇಶ್ವರನ ಚಿತ್ತಾನುಸಾರ ನಡೆದನು.</verse>
				<verse number="3">ಹಿಜ್ಕೀಯನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಸರ್ವೇಶ್ವರನ ಆಲಯದ ಬಾಗಿಲುಗಳನ್ನು ತೆರೆಯಿಸಿ ಅವುಗಳನ್ನು ಭದ್ರಪಡಿಸಿದನು.</verse>
				<verse number="4">ಆಮೇಲೆ ಯಾಜಕರನ್ನೂ ಲೇವಿಯರನ್ನೂ ದೇವಾಲಯದ ಪೂರ್ವದಿಕ್ಕಿನ ಬಯಲಿನಲ್ಲಿ ಕೂಡಿಸಿ ಅವರಿಗೆ,</verse>
				<verse number="5">“ಲೇವಿಯರೇ, ನನ್ನ ಮಾತನ್ನು ಕೇಳಿರಿ; ಈಗ ನಿಮ್ಮನ್ನೇ ಶುದ್ಧಪಡಿಸಿಕೊಂಡು, ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನ ಪವಿತ್ರಾಲಯದಿಂದ ಹೊಲಸನ್ನೆಲ್ಲಾ ಹೊರಗೆ ಹಾಕಿ, ಆಲಯವನ್ನು ಶುದ್ಧೀಕರಿಸಿರಿ.</verse>
				<verse number="6">ನಿಮ್ಮ ಪೂರ್ವಜರು ನಮ್ಮ ದೇವರಾದ ಸರ್ವೇಶ್ವರನಿಗೆ ದ್ರೋಹಮಾಡಿ ಅವರ ಚಿತ್ತಕ್ಕೆ ವಿರುದ್ಧ ನಡೆದು ಅವರನ್ನು ತೊರೆದುಬಿಟ್ಟರು; ಅವರ ನಿವಾಸ ಸ್ಥಳಕ್ಕೆ ಬೆನ್ನುಕೊಟ್ಟು ವಿಮುಖರಾದರು.</verse>
				<verse number="7">ಅದರ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು; ಇಸ್ರಯೇಲ್‍ದೇವರ ಪವಿತ್ರಸ್ಥಾನದಲ್ಲಿ ಧೂಪಾರತಿ ಎತ್ತುವುದನ್ನೂ ದಹನಬಲಿ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು.</verse>
				<verse number="8">ಆದುದರಿಂದ ಸರ್ವೇಶ್ವರ, ಜುದೇಯ ನಾಡಿನ ಮೇಲೂ ಜೆರುಸಲೇಮಿನ ಮೇಲೂ ಕೋಪಗೊಂಡು ಅವುಗಳನ್ನು ಭಯಭೀತಿಗೂ ಹಾಸ್ಯಪರಿಹಾಸ್ಯಗಳಿಗೂ ಆಸ್ಪದವಾಗಿಸಿದ್ದಾರೆ. ಇದಕ್ಕೆ ನೀವೇ ಸಾಕ್ಷಿಗಳು.</verse>
				<verse number="9">ಅದೇ ಕಾರಣದಿಂದ ನಮ್ಮ ಹಿರಿಯರು ಕತ್ತಿಗೆ ತುತ್ತಾಗಿದ್ದಾರೆ. ನಮ್ಮ ಗಂಡುಹೆಣ್ಣುಮಕ್ಕಳೂ ಹೆಂಡತಿಯರೂ ಸೆರೆಯಾಳುಗಳಾಗಿ ಹೋಗಬೇಕಾಯಿತು.</verse>
				<verse number="10">ಈಗ ನಮ್ಮ ಮೇಲಿರುವ ದೈವಕೋಪಾಗ್ನಿ ತೊಲಗಿಹೋಗುವಂತೆ ಇಸ್ರಯೇಲ್ ದೇವರಾದ ಸರ್ವೇಶ್ವರನೊಡನೆ ಒಡಂಬಡಿಕೆ ಮಾಡಿಕೊಳ್ಳುವುದಕ್ಕೆ ತೀರ್ಮಾನಿಸಿದ್ದೇನೆ.</verse>
				<verse number="11">ಹೀಗಿರಲಾಗಿ ನನ್ನ ಮಕ್ಕಳೇ, ಉದಾಸೀನರಾಗಿರಬೇಡಿ; ಸರ್ವೇಶ್ವರ ತಮ್ಮನ್ನು ಆರಾಧಿಸುವುದಕ್ಕೂ ತಮಗೆ ಧೂಪಾರತಿ ಎತ್ತುವುದಕ್ಕೂ ನಿಮ್ಮನ್ನು ತಮ್ಮ ಸಾನ್ನಿಧ್ಯಸೇವಕರನ್ನಾಗಿ ಆರಿಸಿಕೊಂಡರಲ್ಲವೇ?’ ಎಂದು ಹೇಳಿದನು.</verse>
				<verse number="12">ಕೂಡಲೆ ಕೆಹಾತ್ಯರಲ್ಲಿ ಅಮಾಸೈಯ ಮಗ ಮೆಹತ್, ಅಜರ್ಯನ ಮಗ ಯೋವೇಲ್, ಮೆರಾರೀಯರಲ್ಲಿ ಅಬ್ದೀಯ ಮಗ ಕೀಷ್, ಯೆಹಲ್ಲೆಲೇಲನ ಮಗ ಅಜರ್ಯ, ಗೆರ್ಷೋನ್ಯರಲ್ಲಿ ಜಿಮ್ಮನ ಮಗ ಯೋವಾಹ,</verse>
				<verse number="13">ಯೋವಾಹನ ಮಗ ಏದೆನ್, ಎಲೀಚಾಫಾನ್ಯರಲ್ಲಿ ಶಿಮ್ರೀ, ಯೆಗೀಯೇಲ್, ಅಸಾಫ್ಯರಲ್ಲಿ ಜೆಕರ್ಯ,</verse>
				<verse number="14">ಮತ್ತನ್ಯ, ಹೇಮಾನ್ಯರಲ್ಲಿ ಯೆಹೀಯೇಲ್, ಶಿಮ್ಮೀ, ಯೆದೂತೂನ್ಯರಲ್ಲಿ ಶೆಮಾಯ ಹಾಗು ಉಜ್ಜೀಯೇಲ್</verse>
				<verse number="15">ಎಂಬ ಲೇವಿಯರು ಮುಂದೆ ಬಂದು ತಮ್ಮ ಸಹೋದರರನ್ನು ಒಂದುಗೂಡಿಸಿದರು. ಅವರು ಅರಸನ ಆಜ್ಞಾಧಾರಕರಾಗಿ ಸರ್ವೇಶ್ವರನ ಧರ್ಮಶಾಸ್ತ್ರವಿಧಿಯ ಮೇರೆಗೆ ತಮ್ಮನ್ನು ಶುದ್ಧಪಡಿಸಿಕೊಂಡು ಸರ್ವೇಶ್ವರನ ಆಲಯವನ್ನು ಶುದ್ಧೀಕರಿಸುವುದಕ್ಕೆ ಸಿದ್ಧರಾದರು.</verse>
				<verse number="16">ಯಾಜಕರು ಸರ್ವೇಶ್ವರನ ಆಲಯವನ್ನು‍ ಶುದ್ಧಮಾಡುವುದಕ್ಕೆ ಒಳಗೆ ಹೋಗಿ ಪವಿತ್ರಸ್ಥಾನದಲ್ಲಿದ್ದ ಹೊಲಸನ್ನೆಲ್ಲಾ ಹೊರಗೆ ತಂದು ಪ್ರಾಕಾರದಲ್ಲಿ ಹಾಕಿದರು. ಲೇವಿಯರು ಅದನ್ನು ಕೂಡಿಸಿ ಹೊರಗೆ ಒಯ್ದು ಕಿದ್ರೋನ್ ಹಳ್ಳದಲ್ಲಿ ಹಾಕಿದರು.</verse>
				<verse number="17">ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಈ ಶುದ್ಧೀಕರಣವನ್ನು ಪ್ರಾರಂಭಿಸಿದರು. ಎಂಟನೆಯ ದಿನದಲ್ಲಿ ಸರ್ವೇಶ್ವರನ ಆಲಯದ ಮಂಟಪಕ್ಕೆ ಕೈಹಾಕಿದರು; ಹೀಗೆ ಸರ್ವೇಶ್ವರನ ಆಲಯವನ್ನು ಶುದ್ಧಪಡಿಸುವುದರಲ್ಲಿ ಎಂಟು ದಿನಗಳು ಕಳೆದವು. ಮೊದಲನೆಯ ತಿಂಗಳಿನ ಹದಿನಾರನೆಯ ದಿನದಲ್ಲಿ ಕೆಲಸವೆಲ್ಲಾ ಮುಗಿಯಿತು.</verse>
				<verse number="18">ಆಮೇಲೆ ಅವರು ಅರಮನೆಗೆ ಹೋಗಿ, ಅರಸ ಹಿಜ್ಕೀಯನಿಗೆ, “ನಾವು ಸರ್ವೇಶ್ವರನ ಆಲಯವನ್ನು ಪೂರ್ತಿಯಾಗಿ ಶುದ್ಧೀಕರಿಸಿದೆವು. ಬಲಿಪೀಠವನ್ನು, ಅದರ ಉಪಕರಣಗಳನ್ನು, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನು ಹಾಗು ಅದರ ಸಾಮಗ್ರಿಗಳನ್ನೂ ಶುದ್ಧಮಾಡಿದೆವು.</verse>
				<verse number="19">ಅರಸ ಅಹಾಜನು, ತನ್ನ ಆಳ್ವಿಕೆಯಲ್ಲಿ ದೇವದ್ರೋಹಿಯಾಗಿ ತಳ್ಳಿಬಿಟ್ಟಿದ್ದ ಪಾತ್ರೆಗಳನ್ನು ಮತ್ತೆ ತಂದು ಇಟ್ಟು ಪ್ರತಿಷ್ಠಿಸಿದ್ದೇವೆ; ಅವು ಈಗ ಸರ್ವೇಶ್ವರನ ಬಲಿಪೀಠದ ಮುಂದಿರುತ್ತವೆ,” ಎಂದು ವರದಿಮಾಡಿದರು.</verse>
				<verse number="20">ಅರಸ ಹಿಜ್ಕೀಯನು ಮರುದಿನ ಬೆಳಗಿನ ಜಾವದಲ್ಲೆದ್ದು ಪಟ್ಟಣದ ಮುಖಂಡರನ್ನು ಕೂಡಿಸಿ ಅವರೊಡನೆ ಸರ್ವೇಶ್ವರನ ಆಲಯಕ್ಕೆ ಹೋದನು.</verse>
				<verse number="21">ಅವರು ಸರಕಾರಿ, ದೇವಾಲಯ ಹಾಗು ಯೆಹೂದಪ್ರಜೆ ಇವುಗಳಿಗಾಗಿ ದೋಷಪರಿಹಾರಕ ಬಲಿಯರ್ಪಿಸುವುದಕ್ಕಾಗಿ ಹೋರಿ, ಟಗರು, ಕುರಿಮರಿ, ಹೋತ, ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕ ಆರೋನನ ಸಂತಾನದವರಿಗೆ ಸರ್ವೇಶ್ವರನ ಬಲಿಪೀಠದ ಮೇಲೆ ದಹನಬಲಿ ಮಾಡಬೇಕೆಂದು ಆಜ್ಞಾಪಿಸಿದನು.</verse>
				<verse number="22">ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ರಕ್ತವನ್ನು ಕೂಡಿಸಿ ಬಲಿಪೀಠಕ್ಕೆ ಪ್ರೋಕ್ಷಿಸಿದರು. ಅನಂತರ ಟಗರುಗಳನ್ನು ವಧಿಸಿ ಅವುಗಳ ರಕ್ತವನ್ನು ಬಲಿಪೀಠಕ್ಕೆ ಪ್ರೋಕ್ಷಿಸಿದರು. ಆಮೇಲೆ ಕುರಿದನಗಳನ್ನು ವಧಿಸಿ ಅವುಗಳ ರಕ್ತವನ್ನೂ ಬಲಿಪೀಠಕ್ಕೆ ಪ್ರೋಕ್ಷಿಸಿದರು.</verse>
				<verse number="23">ಕಡೆಯಲ್ಲಿ ದೋಷಪರಿಹಾರಕ ಬಲಿಗಾಗಿ ತಂದ ಹೋತಗಳನ್ನು ಅರಸನ ಮುಂದೆಯೂ ಸಮಾಜದವರ ಮುಂದೆಯೂ ನಿಲ್ಲಿಸಿದರು. ಅವರು ಅವುಗಳ ಮೇಲೆ ತಮ್ಮ ಕೈಗಳನ್ನು ಚಾಚಿದರು.</verse>
				<verse number="24">ಅನಂತರ ಯಾಜಕರು ಅವುಗಳನ್ನು ವಧಿಸಿ ಅವುಗಳ ರಕ್ತವನ್ನು ಸಮಸ್ತ ಇಸ್ರಯೇಲರ ದೋಷಪರಿಹಾರಕ್ಕಾಗಿ ಬಲಿಪೀಠದ ಮೇಲೆ ಸುರಿದರು. ಆ ದಹನಬಲಿಗಳೂ ದೋಷಪರಿಹಾರಕ ಬಲಿಗಳೂ ಎಲ್ಲ ಇಸ್ರಯೇಲರ ಪರವಾಗಿ ಆಗಬೇಕೆಂದು ಅರಸನು ಆಜ್ಞಾಪಿಸಿದ್ದನು.</verse>
				<verse number="25">ಇದಲ್ಲದೆ, ಅವನು ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದ ಭಜಿಸುವುದಕ್ಕಾಗಿ ಲೇವಿಯರನ್ನು ನೇಮಿಸಿದನು. ದಾವೀದನ ರಾಜದರ್ಶಿಯಾದ ಗಾದ್ ಹಾಗು ಪ್ರವಾದಿ ನಾತಾನ್ ಇವರ ಆಜ್ಞಾನುಸಾರ ಸರ್ವೇಶ್ವರನ ಆಲಯದಲ್ಲಿ ಈ ಗಾಯಕರನ್ನು ಇರಿಸಿದ್ದನು. ಸರ್ವೇಶ್ವರಸ್ವಾಮಿಯೇ ಪ್ರವಾದಿಗಳ ಮುಖಾಂತರ ಹೀಗೆ ಆಜ್ಞಾಪಿಸಿದ್ದರು.</verse>
				<verse number="26">ಆ ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿರಲು ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿಯನ್ನು ಸಮರ್ಪಿಸುವುದಕ್ಕೆ ಆಜ್ಞಾಪಿಸಿದನು.</verse>
				<verse number="27">ಹೀಗೆ ದಹನಬಲಿ ಸಮರ್ಪಣೆ ಪ್ರಾರಂಭಿಸಿದೊಡನೆ ಇಸ್ರಯೇಲ್ ಅರಸ ದಾವೀದನ ವಾದ್ಯಗಳಿಂದ ಸರ್ವೇಶ್ವರನನ್ನು ಭಜಿಸುವುದೂ ತುತೂರಿ ಊದುವುದೂ ಆರಂಭವಾಯಿತು.</verse>
				<verse number="28">ದಹನಬಲಿ ಸಮರ್ಪಣೆಯು ಮುಗಿಯುವವರೆಗೆ ಸಭೆಸೇರಿದವರು ಸಾಷ್ಟಾಂಗ ನಮಸ್ಕಾರ ಮಾಡುತ್ತಾ ಇದ್ದರು; ಗಾಯಕರು ಗಾನ ಮಾಡುತ್ತಾ ಇದ್ದರು; ತುತೂರಿ ಊದುವವರು ಊದುತ್ತಾ ಇದ್ದರು.</verse>
				<verse number="29">ದಹನಬಲಿ ಸಮರ್ಪಣೆ ತೀರಿದ ಮೇಲೆ ಅರಸನೂ ಅವನ ಜೊತೆಯಲ್ಲಿದ್ದವರೆಲ್ಲರೂ ಸಾಷ್ಟಾಂಗ ನಮಸ್ಕಾರ ಮಾಡಿದರು.</verse>
				<verse number="30">ಅರಸ ಹಿಜ್ಕೀಯನೂ ಪದಾಧಿಕಾರಿಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಸರ್ವೇಶ್ವರನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.</verse>
				<verse number="31">ಆಮೇಲೆ ಹಿಜ್ಕೀಯನು ಸಭೆ ಸೇರಿದವರಿಗೆ, “ನೀವು ಈಗ ಸರ್ವೇಶ್ವರನಿಗಾಗಿ ನಿಮ್ಮನ್ನೇ ಪ್ರತಿಷ್ಠಿಸಿಕೊಂಡಿದ್ದೀರಿ; ಹತ್ತಿರ ಬಂದು ಸರ್ವೇಶ್ವರನ ಆಲಯಕ್ಕೆ ಸಮಾಧಾನಬಲಿಗಳನ್ನೂ ಕೃತಜ್ಞತಾಬಲಿಗಳನ್ನೂ ಸಮರ್ಪಿಸಿರಿ,” ಎಂದನು. ಸಭೆ ಸೇರಿದ್ದವರು ಸಮಾಧಾನ ಬಲಿಗಳನ್ನೂ ಕೃತಜ್ಞತಾಬಲಿಗಳನ್ನೂ ಸಮರ್ಪಿಸಿದ್ದಲ್ಲದೆ, ಅನೇಕರು ಸ್ವಇಚ್ಛೆಯಿಂದ ದಹನಬಲಿಗಳನ್ನೂ ಸಮರ್ಪಿಸಿದರು.</verse>
				<verse number="32">ಹೀಗೆ ಸಭಿಕರು ದಹನಬಲಿದಾನಕ್ಕಾಗಿ ತಂದೊಪ್ಪಿಸಿದ ಹೋರಿಗಳು ಎಪ್ಪತ್ತು, ಟಗರುಗಳು ನೂರು, ಕುರಿಮರಿಗಳು ಇನ್ನೂರು. ಇವೆಲ್ಲವು ಸರ್ವೇಶ್ವರನಿಗೆ ದಹನಬಲಿ ಸಮರ್ಪಣೆಗಾಗಿಯೇ ಕೊಡಲಾದುವು.</verse>
				<verse number="33">ಹೀಗೆ ದೇವರಿಗೆ ಕಾಣಿಕೆಯಾಗಿ ತರಲಾದ ಹೋರಿಗಳು ಆರುನೂರು, ಕುರಿಗಳು ಮೂರು ಸಾವಿರ.</verse>
				<verse number="34">ಈ ಎಲ್ಲಾ ಪ್ರಾಣಿಗಳನ್ನು ವಧಿಸುವ ಕೆಲಸಕ್ಕೆ ಯಾಜಕರು ಸಾಲದೆಹೋದುದರಿಂದ ಆ ಕಾರ್ಯ ಮುಗಿವ ತನಕ, ಅವರ ಬಂಧುಗಳಾದ ಲೇವಿಯರು ಅವರಿಗೆ ಸಹಾಯ ಮಾಡುತ್ತಿದ್ದರು; ಅಷ್ಟರಲ್ಲಿ ಮಿಕ್ಕ ಯಾಜಕರು ತಮ್ಮನ್ನೇ ಶುದ್ಧೀಪಡಿಸಿಕೊಳ್ಳುತ್ತಿದ್ದರು. ತಮ್ಮನ್ನು ಶುದ್ಧಪಡಿಸಿಕೊಳ್ಳುವುದರಲ್ಲಿ ಯಾಜಕರಿಗಿಂತ ಲೇವಿಯರೇ ಹೆಚ್ಚು ಶ್ರದ್ಧೆಯುಳ್ಳವರಾಗಿದ್ದರು.</verse>
				<verse number="35">ಇದಲ್ಲದೆ, ಯಾಜಕರು ಸಮರ್ಪಿಸಬೇಕಾಗಿದ್ದ ದಹನಬಲಿ, ಶಾಂತಿಸಮಾಧಾನ ಬಲಿಗಳ ಕೊಬ್ಬು ಹಾಗು ದಹನಬಲಿ ಸಂಬಂಧವಾದ ಪಾನದ್ರವ್ಯ ಇವೂ ಅಪಾರವಾಗಿ ಇದ್ದವು.</verse>
				<verse number="36">ಹೀಗೆ ಸರ್ವೇಶ್ವರನ ಆಲಯದ ಸೇವಾಕ್ರಮವು ಪುನಃ ಸ್ಥಾಪಿತವಾಯಿತು. ಯಾರೂ ಗಮನಿಸುವುದಕ್ಕೆ ಮುಂಚೆಯೇ, ದೇವರು ತಾವೇ ತಮ್ಮ ಪ್ರಜೆಗಳಿಗಾಗಿ ಈ ಕಾರ್ಯವನ್ನು ನೆರವೇರಿಸಿದ್ದರಿಂದ ಹಿಜ್ಕೀಯನೂ ಎಲ್ಲ ಜನರೂ ಸಂತೋಷಪಟ್ಟರು.</verse>
			</chapter>
			<chapter number="30">
				<verse number="1">ತರುವಾಯ ಹಿಜ್ಕೀಯನು, ಇಸ್ರಯೇಲ್ ದೇವರಾದ ಸರ್ವೇಶ್ವರಸ್ವಾಮಿಯ ಪಾಸ್ಕವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿನಲ್ಲಿರುವ ಸರ್ವೇಶ್ವರನ ಮಹಾಲಯಕ್ಕೆ ಬರಬೇಕೆಂದು ಎಲ್ಲ ಇಸ್ರಯೇಲರಿಗೆ, ಯೆಹೂದ್ಯರಿಗೆ, ಎಫ್ರಯಿಮರಿಗೆ ಹಾಗು ಮನಸ್ಸೆಯವರಿಗೆ ದೂತರ ಮುಖಾಂತರ ಮತ್ತು ಪತ್ರಗಳ ಮೂಲಕ ತಿಳಿಯಪಡಿಸಿದನು.</verse>
				<verse number="2">ಯಾಜಕರಲ್ಲಿ ತಕ್ಕಷ್ಟು ಮಂದಿ ತಮ್ಮನ್ನು ಶುದ್ಧಪಡಿಸಿಕೊಂಡಿರಲಿಲ್ಲ. ಜನರು ಜೆರುಸಲೇಮಿನಲ್ಲಿ ಇನ್ನೂ ಕೂಡಿಬಂದಿರಲಿಲ್ಲವಾದುದರಿಂದ ಪಾಸ್ಕವನ್ನು ಕೂಡಲೆ ಆಚರಿಸಲಾಗದೆಂದು ಅರಸನು, ಅವನ ಪದಾಧಿಕಾರಿಗಳು ಹಾಗು ಜೆರುಸಲೇಮಿನ ಸರ್ವಸಂಘದವರು ತಿಳಿದು</verse>
				<verse number="3">ಎರಡನೆಯ ತಿಂಗಳಿನಲ್ಲಿ ಅದನ್ನು ಆಚರಿಸಬೇಕೆಂದು ಅಭಿಪ್ರಾಯಪಟ್ಟರು.</verse>
				<verse number="4">ಈ ಅಭಿಪ್ರಾಯ ಅರಸನಿಗೂ ಸಾರ್ವಜನಿಕರಿಗೂ ಸರಿಕಂಡಿತು.</verse>
				<verse number="5">ಜನರು ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಪಾಸ್ಕವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಬರಬೇಕೆಂಬುದಾಗಿ ಬೇರ್ಷೆಬದಿಂದ ದಾನಿನವರೆಗೂ ವಾಸಿಸುವ ಇಸ್ರಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಆವರೆಗೂ, ಜನರಲ್ಲಿ ಹೆಚ್ಚುಮಂದಿ ಧರ್ಮಶಾಸ್ತ್ರವಿಧಿಯ ಮೇರೆಗೆ, ಪಾಸ್ಕವನ್ನು ಆಚರಿಸಲಿಲ್ಲ.</verse>
				<verse number="6">ಅರಸನ ಮತ್ತು ಅವನ ಪದಾಧಿಕಾರಿಗಳ ಪತ್ರವನ್ನು ತೆಗೆದುಕೊಂಡುಹೋದ ದೂತರು ಇಸ್ರಯೇಲ್ ಹಾಗು ಜುದೇಯ ನಾಡುಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಹೀಗೆಂದು ಪ್ರಕಟಿಸಿದರು: “ಇಸ್ರಯೇಲರೇ, ಅಬ್ರಹಾಮ್, ಇಸಾಕ್, ಇಸ್ರಯೇಲರ ದೇವರಾದ ಸರ್ವೇಶ್ವರನಿಗೆ ಅಭಿಮುಖರಾಗಿರಿ. ಆಗ ಅವರೂ ನಿಮ್ಮಲ್ಲಿ ಅಸ್ಸೀರಿಯಾದ ಅರಸನ ಕೈಗೆ ಸಿಕ್ಕದೆ ತಪ್ಪಿಸಿಕೊಂಡ ಅಳಿದುಳಿದವರಿಗೆ ಅಭಿಮುಖರಾಗುವರು.</verse>
				<verse number="7">ನಿಮ್ಮ ಹೆತ್ತವರೂ ಸಹೋದರರೂ ನಡೆದಂತೆ ನೀವೂ ನಡೆಯಬೇಡಿ. ಅವರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ದ್ರೋಹಿಗಳಾದರು; ಈ ಕಾರಣ ನಾಶನಕ್ಕೆ ಗುರಿಯಾದರು. ಅದಕ್ಕೆ ನೀವೇ ಸಾಕ್ಷಿಗಳು.</verse>
				<verse number="8">ಈಗ ನಿಮ್ಮ ಪೂರ್ವಜರಂತೆ ಆಜ್ಞೆಗೆ ಮಣಿಯದವರಾಗಬೇಡಿ. ಸರ್ವೇಶ್ವರನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಸರ್ವೇಶ್ವರ ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಅವರನ್ನು ಅವಲಂಬಿಸಿರಿ. ಆಗ ನಿಮ್ಮ ಮೇಲಿರುವ ಅವರ ಉಗ್ರಕೋಪ ತೊಲಗಿಹೋಗುವುದು.</verse>
				<verse number="9">ನೀವು ಸರ್ವೇಶ್ವರನಿಗೆ ಅಭಿಮುಖರಾದರೆ, ನಿಮ್ಮ ಸಹೋದರರೂ ಮಕ್ಕಳೂ ತಮ್ಮನ್ನು ಸೆರೆಯೊಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ಮರಳಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಸರ್ವೇಶ್ವರ ದಯಾವಂತರು, ಕನಿಕರವುಳ್ಳವರು. ತಮಗೆ ಅಭಿಮುಖರಾಗುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”</verse>
				<verse number="10">ದೂತರು ಎಫ್ರಯಿಮ್, ಮನಸ್ಸೆ, ಜೆಬುಲೂನ್ ಪ್ರಾಂತಗಳಲ್ಲಿ ಪಟ್ಟಣದಿಂದ ಪಟ್ಟಣಕ್ಕೆ ಹೋದರು. ಆದರೆ ಜನರು ಅವರನ್ನು ಕಂಡು ನಕ್ಕು ಗೇಲಿಮಾಡಿದರು.</verse>
				<verse number="11">ಕೆಲವು ಮಂದಿ ಆಶೇರ್ಯರು, ಮನಸ್ಸೆಯವರು ಹಾಗು ಜೆಬುಲೂನ್ಯರು ಮಾತ್ರ ದೀನಮನಸ್ಕರಾಗಿ ಜೆರುಸಲೇಮಿಗೆ ಬಂದರು.</verse>
				<verse number="12">ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ, ಅವರ ಪ್ರೇರಣೆಯಿಂದ, ಏಕಮನಸ್ಸುಳ್ಳವರಾಗಿ, ಸರ್ವೇಶ್ವರನ ಧರ್ಮಶಾಸ್ತ್ರಾನುಸಾರ, ಅರಸನಿಂದಲೂ ಅಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.</verse>
				<verse number="13">ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿನಲ್ಲಿ ಕೂಡಿದರು; ಅದೊಂದು ಮಹಾಕೂಟವಾಗಿತ್ತು.</verse>
				<verse number="14">ಅವರು ಜೆರುಸಲೇಮಿನಲ್ಲಿದ್ದ ಯಜ್ಞವೇದಿಗಳನ್ನೂ ಧೂಪವೇದಿಗಳನ್ನೂ ತೆಗೆದುಕೊಂಡು ಹೋಗಿ ಕಿದ್ರೋನ್ ಹಳ್ಳದಲ್ಲಿ ಬಿಸಾಡಿಬಿಟ್ಟರು.</verse>
				<verse number="15">ಆಮೇಲೆ ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನ ಪಾಸ್ಕಹಬ್ಬಕ್ಕಾಗಿ ಕುರಿಮರಿಗಳನ್ನು ವಧಿಸಿದರು. ಯಾಜಕರೂ ಲೇವಿಯರೂ, ಮೊದಲನೆಯ ಸಾರಿ ತಪ್ಪಿದ್ದಕ್ಕಾಗಿ ನಾಚಿಕೆಪಟ್ಟು, ತಮ್ಮನ್ನು ಶುದ್ಧಪಡಿಸಿಕೊಂಡರು. ಸರ್ವೇಶ್ವರನ ಆಲಯದಲ್ಲಿ ದಹನಬಲಿಗಳನ್ನು ಸಮರ್ಪಿಸಿದರು;</verse>
				<verse number="16">ತಮ್ಮ ತಮ್ಮ ಸ್ಥಳಗಳಲ್ಲಿ ನಿಂತು, ದೈವಪುರುಷನಾದ ಮೋಶೆಯ ಧರ್ಮಶಾಸ್ತ್ರದಿಂದ ತಮಗೆ ನೇಮಕವಾದ, ಸೇವೆಯನ್ನು ಸಲ್ಲಿಸಿದರು. ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಅದನ್ನು ಪ್ರೋಕ್ಷಿಸಿದರು.</verse>
				<verse number="17">ಜನಸಮೂಹದಲ್ಲಿ ಅನೇಕರು ತಮ್ಮನ್ನು ಶುದ್ಧಪಡಿಸಿಕೊಳ್ಳದೆ ಇದ್ದುದರಿಂದ, ಅಶುದ್ಧರಾಗಿದ್ದವರೆಲ್ಲರ ಬಲಿಪಶುಗಳು ಸರ್ವೇಶ್ವರನಿಗೆ ಮೀಸಲಾಗುವಂತೆ ಅವುಗಳನ್ನು ಲೇವಿಯರೇ ವಧಿಸಿದರು.</verse>
				<verse number="18">ಜನರಲ್ಲಿ ಅನೇಕಾನೇಕರು ಅಂದರೆ, ಹೆಚ್ಚಾಗಿ ಎಫ್ರಯಿಮ್, ಮನಸ್ಸೆ, ಇಸ್ಸಾಕಾರ್ ಹಾಗು ಜೆಬಲೂನ್ ಪ್ರಾಂತಗಳವರು, ತಮ್ಮನ್ನು ಶುದ್ಧಪಡಿಸಿಕೊಳ್ಳದೆ, ಧರ್ಮಶಾಸ್ತ್ರಕ್ಕೆ ವಿರುದ್ಧವಾದ ರೀತಿಯಿಂದ, ಪಾಸ್ಕಭೋಜನವನ್ನು ಮಾಡಿದರು. ಆದರೆ ಹಿಜ್ಕೀಯನು, “ಸರ್ವೇಶ್ವರಾ, ದಯಾಪರರಾದ ದೇವರೇ, ಈ ದೇವಾಲಯಕ್ಕೆ ಯಾತ್ರಿಕರಾಗಿ ಬಂದಿರುವವರಲ್ಲಿ ಇರಬೇಕಾದ ಪರಿಶುದ್ಧತೆ ಅನೇಕರಲ್ಲಿ ಇಲ್ಲ.</verse>
				<verse number="19">ಆದರೂ ಪಿತೃಗಳ ದೇವರಾದ ನಿಮ್ಮನ್ನು ಅರಸುವ ಮನಸ್ಸಿನಿಂದ ಬಂದಿರುವವರಿಗೆಲ್ಲಾ ಕ್ಷಮೆಯನ್ನು ಅನುಗ್ರಹಿಸಿರಿ,” ಎಂದು ವಿಜ್ಞಾಪನೆ ಮಾಡಿದನು.</verse>
				<verse number="20">ಅಂತೆಯೇ ಸರ್ವೇಶ್ವರ ಹಿಜ್ಕೀಯನ ಪ್ರಾರ್ಥನೆಯನ್ನು ಆಲಿಸಿದರು; ಜನರಿಗೆ ಕೇಡು ಮಾಡಲಿಲ್ಲ.</verse>
				<verse number="21">ಜೆರುಸಲೇಮಿನಲ್ಲಿ ಕೂಡಿಬಂದ ಇಸ್ರಯೇಲರು ಏಳು ದಿನಗಳವರೆಗೂ ಮಹಾಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಿದರು. ಲೇವಿಯರೂ ಯಾಜಕರೂ ಮಹಾವಾದ್ಯದೊಡನೆ ಸರ್ವೇಶ್ವರನನ್ನು ಪ್ರತಿದಿನವೂ ಕೀರ್ತಿಸುತ್ತಿದ್ದರು.</verse>
				<verse number="22">ಹಿಜ್ಕೀಯನು ಸರ್ವೇಶ್ವರನ ಸೇವೆಯಲ್ಲಿ ನಿಪುಣರಾದ ಎಲ್ಲ ಲೇವಿಯರನ್ನು ಪುರಸ್ಕರಿಸಿದನು. ನೇಮಕವಾದ ಏಳು ದಿನಗಳವರೆಗೂ ಜನರು ಶಾಂತಿಸಮಾಧಾನ ಬಲಿಗಳನ್ನು ಅರ್ಪಿಸುತ್ತಾ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ತಮ್ಮ ದೇವರೆಂದು ಕೊಂಡಾಡುತ್ತಾ ಔತಣಮಾಡಿದರು.</verse>
				<verse number="23">ಜುದೇಯದ ಅರಸ ಹಿಜ್ಕೀಯನು ಸಾವಿರ ಹೋರಿಗಳನ್ನು, ಏಳು ಸಾವಿರ ಕುರಿಗಳನ್ನು, ಪದಾಧಿಕಾರಿಗಳು ಸಾವಿರ ಹೋರಿಗಳನ್ನು ಹಾಗು ಹತ್ತು ಸಾವಿರ ಕುರಿಗಳನ್ನು ಜನರಿಗೆ ದಾನಮಾಡಿದರು; ಯಾಜಕರಲ್ಲಿ ಬಹುಮಂದಿ ತಮ್ಮನ್ನು ಶುದ್ಧಪಡಿಸಿಕೊಂಡರು.</verse>
				<verse number="24">ಈ ಕಾರಣ, ಸಮೂಹದವರು ಇನ್ನೂ ಏಳು ದಿವಸ ಹಬ್ಬಮಾಡಬೇಕೆಂದು ತೀರ್ಮಾನಿಸಿಕೊಂಡರು. ಆ ಏಳು ದಿನಗಳಲ್ಲಿಯೂ ಬಹಳವಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿದರು.</verse>
				<verse number="25">ಯೆಹೂದ್ಯರ ಸರ್ವಸಮೂಹದವರು, ಯಾಜಕರು, ಲೇವಿಯರು ಇಸ್ರಯೇಲ್ ಪ್ರಾಂತಗಳಿಂದ ನೆರೆದುಬಂದವರು ಎಲ್ಲರು ಹಾಗು ಇಸ್ರಯೇಲ್, ಜುದೇಯ ಪ್ರಾಂತ್ಯಗಳಲ್ಲಿದ್ದ ಪ್ರವಾಸಿಗಳು ಈ ಉತ್ಸವದಲ್ಲಿ ಪಾಲುಗಾರರಾಗಿದ್ದರು.</verse>
				<verse number="26">ದಾವೀದನ ಮಗನೂ ಇಸ್ರಯೇಲರ ಅರಸನೂ ಆದ ಸೊಲೊಮೋನನ ಕಾಲದಿಂದ ಜೆರುಸಲೇಮಿನಲ್ಲಿ ಅಂಥ ಉತ್ಸವ ನಡೆದಿರಲಿಲ್ಲ. ಆದುದರಿಂದ ಜೆರುಸಲೇಮಿನಲ್ಲಿ ಹೇಳತೀರದ ಆನಂದವಿತ್ತು.</verse>
				<verse number="27">ಯಾಜಕರು ಆಗಿದ್ದ ಲೇವಿಯರು ಆಮೇಲೆ ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಸ್ವರ ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆ ಪರಲೋಕದಲ್ಲಿರುವ ಆ ದೇವರ ಪರಿಶುದ್ಧ ನಿವಾಸಕ್ಕೆ ಮುಟ್ಟಿತು.</verse>
			</chapter>
			<chapter number="31">
				<verse number="1">ಇದಾದನಂತರ ನೆರೆದುಬಂದ ಇಸ್ರಯೇಲರೆಲ್ಲರು ಜುದೇಯ ನಾಡಿನ ಪಟ್ಟಣಗಳಿಗೆ ಹೋಗಿ ಕಲ್ಲುಕಂಬಗಳನ್ನು ಒಡೆದು, ಆಶೇರ ವಿಗ್ರಹಸ್ತಂಭಗಳನ್ನು ಕಡಿದುಹಾಕಿ, ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಜುದೇಯ ಹಾಗು ಬೆನ್ಯಾಮೀನ್ ಪ್ರಾಂತಗಳಲ್ಲಿ ಮಾತ್ರವಲ್ಲ, ಎಫ್ರಯಿಮ್, ಮನಸ್ಸೆ ಪ್ರಾಂತಗಳಲ್ಲೂ ಯಾವುದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಯೇಲರೆಲ್ಲರೂ ತಮ್ಮ ತಮ್ಮ ಆಸ್ತಿಪಾಸ್ತಿಯಿದ್ದ ಪಟ್ಟಣಗಳಿಗೆ ಹೋದರು.</verse>
				<verse number="2">ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ದಹನಬಲಿ, ಶಾಂತಿಸಮಾಧಾನ ಬಲಿ ಇವುಗಳನ್ನು ಸಮರ್ಪಿಸುವುದಕ್ಕೂ ಸರ್ವೇಶ್ವರನ ಪಾಳೆಯದ ದ್ವಾರಗಳಲ್ಲಿ ಸೇರಿ ಸರ್ವೇಶ್ವರನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವುದಕ್ಕೂ ಹಿಜ್ಕೀಯನು ನೇಮಿಸಿದನು.</verse>
				<verse number="3">ಇದಲ್ಲದೆ, ಅವನು ಸರ್ವೇಶ್ವರನ ಧರ್ಮಶಾಸ್ತ್ರ ವಿಧಿಗನುಸಾರ ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗು ಜಾತ್ರೆಗಳಲ್ಲಿ ಸಮರ್ಪಣೆ ಆಗತಕ್ಕ ದಹನ ಬಲಿಗಳಿಗೆ ಬೇಕಾದುದನ್ನೆಲ್ಲಾ ತನ್ನ ಆಸ್ತಿಯಿಂದಲೇ ಸಲ್ಲಿಸಲಾಗುವುದೆಂದು ಸೂಚಿಸಿದನು.</verse>
				<verse number="4">ಯಾಜಕರು ಮತ್ತು ಲೇವಿಯರು ಸರ್ವೇಶ್ವರನ ಧರ್ಮದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು, ಜೆರುಸಲೇಮಿನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.</verse>
				<verse number="5">ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದವೆಲ್ಲಾ ಹುಟ್ಟುವಳಿಯಿಂದ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು; ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.</verse>
				<verse number="6">ಜುದೇಯದ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಯೇಲರೂ ಯೆಹೂದ್ಯರೂ ಕುರಿದನಗಳಲ್ಲಿ ದಶಮಾಂಶವನ್ನೂ ಕೊಟ್ಟದ್ದಲ್ಲದೆ, ದೇವರಾದ ಸರ್ವೇಶ್ವರನಿಗೆ ಸಮರ್ಪಣೆಯಾಗತಕ್ಕ ಪರಿಶುದ್ಧ ದ್ರವ್ಯಗಳಲ್ಲಿಯೂ ದಶಮಾಂಶವನ್ನು ತಂದು ರಾಶಿಹಾಕಿದರು.</verse>
				<verse number="7">ಹೀಗೆ ರಾಶಿಹಾಕುವುದು ಮೂರನೆಯ ತಿಂಗಳಲ್ಲಿ ಪ್ರಾರಂಭವಾಗಿ ಏಳನೆಯ ತಿಂಗಳಲ್ಲಿ ಮುಗಿಯಿತು.</verse>
				<verse number="8">ಹಿಜ್ಕೀಯನೂ ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಸರ್ವೇಶ್ವರನನ್ನು ಕೊಂಡಾಡಿ ಅವರ ಪ್ರಜೆಗಳಾದ ಇಸ್ರಯೇಲರನ್ನು ಹರಸಿದರು.</verse>
				<verse number="9">ಹಿಜ್ಕೀಯನು ಯಾಜಕರ ಮತ್ತು ಲೇವಿಯರ ಬಳಿ ಆ ರಾಶಿಗಳ ಬಗ್ಗೆ ವಿಚಾರಿಸಿಧಾಗ,</verse>
				<verse number="10">ಚಾದೋಕ್ ಸಂತಾನದ ಮಹಾಯಾಜಕ ಅಜರ್ಯನು, “ಜನರು ದೇವರಾದ ಸರ್ವೇಶ್ವರನಿಗೆ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಸರ್ವೇಶ್ವರ ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು.</verse>
				<verse number="11">ಬಳಿಕ ಹಿಜ್ಕೀಯನು ಸರ್ವೇಶ್ವರನ ಆಲಯದಲ್ಲಿ ಕೊಠಡಿಗಳನ್ನು ಸಿದ್ಧಮಾಡಲು ಆಜ್ಞಾಪಿಸಿದನು.</verse>
				<verse number="12">ಅವು ಸಿದ್ಧವಾದ ಮೇಲೆ ಜನರು ಕಾಣಿಕೆಗಳನ್ನು, ತಮ್ಮ ಆದಾಯದ ದಶಮಾಂಶವನ್ನು ಹಾಗು ದೇವರಿಗೆ ಮುಡುಪಾಗಿ ಇಟ್ಟಿದ್ದನ್ನು ನಿರ್ವಂಚನೆಯಿಂದ ತಂದು ಅವುಗಳಲ್ಲಿ ಹಾಕುತ್ತಿದ್ದರು. ಈ ಎಲ್ಲಾ ಉಗ್ರಾಣಗಳ ಮೇಲ್ವಿಚಾರಣೆಯಲ್ಲಿ ಲೇವಿಯನಾದ ಕೋನನ್ಯನು ಮುಖ್ಯಸ್ಥನಾಗಿದ್ದನು; ಅವನ ತಮ್ಮ ಶಿಮ್ಮಿಯು ದ್ವಿತೀಯ ಸ್ಥಾನದವನಾಗಿದ್ದನು.</verse>
				<verse number="13">ಅರಸ ಹಿಜ್ಕೀಯನ ಮತ್ತು ಸರ್ವೇಶ್ವರನ ಆಲಯದ ಅಧಿಪತಿಯಾದ ಅಜರ್ಯನ ನಿಯಮದಂತೆ ಯೆಹೀಯೇಲ್, ಅಜಜ್ಯ, ನಹತ್, ಅಸಾಹೇಲ್, ಯೆರೀಮೋತ್, ಯೋಜಾಬಾದ್, ಎಲೀಯೇಲ್, ಇಸ್ಮಕ್ಯ, ಮಹತ್, ಬೆನಾಯ ಇವರು ಕೋನನ್ಯನ ಮತ್ತು ಅವನ ತಮ್ಮನಾದ ಶಿಮ್ಮಿಯ ಕೈಕೆಳಗಿನ ಪಾರುಪತ್ಯಗಾರರಾಗಿದ್ದರು.</verse>
				<verse number="14">ಪೂರ್ವದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ಲನ ಮಗ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅದು ಮಾತ್ರವಲ್ಲ, ಸರ್ವೇಶ್ವರನಿಗೆ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.</verse>
				<verse number="15">ಇವನ ಕೈಕೆಳಗೆ ಏದೆನ್, ಮಿನ್ಯಾಮಿನ್, ಯೇಷೂವ, ಶೆಮಾಯ, ಅಮರ್ಯ, ಶೆಕನ್ಯ ಎಂಬವರಿದ್ದರು. ಇವರು ಯಾಜಕರ ಪಟ್ಟಣಗಳಲ್ಲಿದ್ದು, ತಮ್ಮ ಬಂಧುಗಳಿಗೆ ದೊಡ್ಡವರು ಚಿಕ್ಕವರು ಎಂಬ ವ್ಯತ್ಯಾಸಮಾಡದೆ, ಅವರವರ ವರ್ಗಗಳ ಪ್ರಕಾರ ಪಾಲುಕೊಡುತ್ತಿದ್ದರು.</verse>
				<verse number="16">(ಆಯಾ ಉದ್ಯೋಗ ವರ್ಗಗಳಿಗನುಸಾರ ಅನುದಿನ ಸೇವೆಗಾಗಿ ಸರ್ವೇಶ್ವರನ ಆಲಯಕ್ಕೆ ಬರುತ್ತಿದ್ದ ಗಂಡಸರಲ್ಲಿ ಮೂವತ್ತು ವರ್ಷ ಮತ್ತು ಅದಕ್ಕೂ ಮೇಲ್ಪಟ್ಟ ವಯಸ್ಸು ಉಳ್ಳವರಿಗೆ ಪಟ್ಟಿಯಲ್ಲಿ ಬರೆದಿದ್ದ ಹಾಗೆ ಕೊಡುತ್ತಿದ್ದರು.</verse>
				<verse number="17">ಆ ಪಟ್ಟಿಯಲ್ಲಿ ಗೋತ್ರಗಳಿಗನುಸಾರ ಹಾಗು ಆಯಾ ಉದ್ಯೋಗ ವರ್ಗಗಳಿಗನುಸಾರ ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಯಾಜಕರು, ಲೇವಿಯರು,</verse>
				<verse number="18">ಅವರವರ ಹೆಂಡತಿಯರು, ಗಂಡು-ಹೆಣ್ಣು ಮಕ್ಕಳು, ಅಂತು ತಮ್ಮ ಉದ್ಯೋಗದ ನಿಮಿತ್ತ ತಮ್ಮನ್ನೇ ದೇವರಿಗೆ ಪ್ರತಿಷ್ಠಿಸಿಕೊಂಡ ಸಮೂಹದವರೂ ಅವರಿಗೆ ಸೇರಿದವರೆಲ್ಲರೂ ಲಿಖಿತರಾಗಿದ್ದರು.)</verse>
				<verse number="19">ಇದಲ್ಲದೆ ಆಯಾ ಪಟ್ಟಣಗಳಿಗೆ ಸೇರಿದ ಗೋಮಾಳಗಳಲ್ಲಿದ್ದ ಆರೋನನ ಸಂತಾನದ ಯಾಜಕರಿಗೆ ಪಾಲುಕೊಡುತ್ತಿದ್ದರು. ಯಾಜಕ ಸಂತಾನದ ಎಲ್ಲ ಗಂಡಸರಿಗೂ, ಪಟ್ಟಿಯಲ್ಲಿ ಲಿಖಿತರಾದ ಎಲ್ಲ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಹಂಚಿಕೊಡುವುದಕ್ಕೆ ಹೆಸರಿಸಲಾದ ಪುರುಷರಿದ್ದರು.</verse>
				<verse number="20">ಹಿಜ್ಕೀಯನು ಜುದೇಯದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಸರ್ವೇಶ್ವರನಿಗೆ ಒಳ್ಳೆಯವನು, ನೀತಿವಂತನು ಹಾಗು ನಂಬಿಗಸ್ತನು ಆಗಿ ನಡೆದನು.</verse>
				<verse number="21">ದೇವಾಲಯದ ಸೇವಾಸಂಬಂಧದಲ್ಲೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲೂ ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದ ಮಾಡಿ ಮುಗಿಸಿ, ತನ್ನ ದೇವರ ಒಲುಮೆಯನ್ನು ಗಳಿಸಿಕೊಂಡನು.</verse>
			</chapter>
			<chapter number="32">
				<verse number="1">ಈ ಧಾರ್ಮಿಕ ಸುಧಾರಣೆಗಳಾದ ನಂತರ ಅಸ್ಸೀರಿಯಾದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಜುದೇಯಕ್ಕೆ ನುಗ್ಗಿದನು. ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಮುತ್ತಿಗೆ ಹಾಕಿದನು.</verse>
				<verse number="2">ನಾಡಿನೊಳಗೆ ನುಗ್ಗಿದ ಸನ್ಹೇರೀಬನು ಜೆರುಸಲೇಮಿನ ಮೇಲೂ ಯುದ್ಧಕ್ಕೆ ಬರಲು ನಿಶ್ಚಯಿಸಿದ್ದಾನೆಂದು ಹಿಜ್ಕೀಯನಿಗೆ ಗೊತ್ತಾಯಿತು.</verse>
				<verse number="3">ಅವನು ಪಟ್ಟಣದ ಹೊರಗಿರುವ ಎಲ್ಲಾ ಬಾವಿಗಳನ್ನು ಮುಚ್ಚಿಸಬೇಕೆಂದು ಮನಸ್ಸುಮಾಡಿ ತನ್ನ ಪ್ರಮುಖರ ಮತ್ತು ಶೂರರ ಮುಂದೆ ಆ ಪ್ರಸ್ತಾಪವೆತ್ತಿ ಅವರ ಸಹಾಯವನ್ನು ಪಡೆದುಕೊಂಡನು.</verse>
				<verse number="4">ಆಗ ಅನೇಕರು ಸೇರಿ, “ಇಲ್ಲಿಗೆ ಬರುವ ಅಸ್ಸೀರಿಯದ ರಾಜನಿಗೆ ಬೇಕಾದಷ್ಟು ನೀರು ಏಕೆ ಸಿಕ್ಕಬೇಕು?,” ಎಂದುಕೊಂಡು ಎಲ್ಲಾ ಬಾವಿಗಳನ್ನೂ ನಾಡಿನ ಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟರು.</verse>
				<verse number="5">ಇದರಿಂದ ಅರಸನು ಧೈರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ದುರಸ್ತಿಮಾಡಿಸಿ, ಅದರ ಮೇಲೆ ಬುರುಜುಗಳನ್ನೂ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದ ನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದನು. ಅನೇಕ ಆಯುಧಗಳನ್ನೂ ಗುರಾಣಿಗಳನ್ನೂ ಮಾಡಿಸಿದನು.</verse>
				<verse number="6">ಅನಂತರ ಅವನು ಜನರ ಮೇಲೆ ಸೇನಾಪತಿಗಳನ್ನು ನೇಮಿಸಿ ಅವರನ್ನು ಊರುಬಾಗಿಲಿನ ಬಯಲಿನಲ್ಲಿ ಕೂಡಿಸಿದನು. ಅವರಿಗೆ, “ಶೂರರಾಗಿರಿ, ಧೈರ್ಯದಿಂದಿರಿ;</verse>
				<verse number="7">ಅಸ್ಸೀರಿಯದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಸೈನ್ಯಕ್ಕೂ ಅಂಜಬೇಡಿ, ಕಳವಳಪಡಬೇಡಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯ ದೊಡ್ಡದು.</verse>
				<verse number="8">ಅವನಿಗಿರುವ ಸಹಾಯ ಮೂಳೆ ಮಾಂಸದ ತಡಿಕೆಯ ಬಲ; ನಮಗಿದ್ದಾರೆ ನಮ್ಮ ದೇವರಾದ ಸರ್ವೇಶ್ವರ. ಅವರೇ ನಮಗೆ ನೆರವಾಗಿ, ಯುದ್ಧಗಳಲ್ಲಿ ನಮ್ಮ ಪರವಾಗಿ ಕಾದಾಡುವರು,” ಎಂದು ಹೇಳಿ ಹುರಿದುಂಬಿಸಿದನು. ಜನರು ಜುದೇಯದ ಅರಸ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.</verse>
				<verse number="9">ಇದಾದ ಮೇಲೆ, ಸರ್ವಸೇನೆಯೊಡನೆ ಲಾಕೀಷಿನ ಎದುರಿನಲ್ಲಿ ಪಾಳೆಯಮಾಡಿಕೊಂಡು ಇದ್ದ ಅಸ್ಸೀರಿಯದ ಅರಸ ಸನ್ಹೇರೀಬನು ತನ್ನ ಮುಖಾಂತರ ಜುದೇಯದ ಅರಸ ಹಿಜ್ಕೀಯನಿಗೂ ಜೆರುಸಲೇಮಿನಲ್ಲಿದ್ದ ಎಲ್ಲಾ ಯೆಹೂದ್ಯರಿಗೂ ಹೀಗೆಂದು ಹೇಳಿಸಿದನು:</verse>
				<verse number="10">“ಅಸ್ಸೀರಿಯದ ಅರಸ ಸನ್ಹೇರೀಬನ ಮಾತಿಗೆ ಕಿವಿಗೊಡಿ; ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಜೆರುಸಲೇಮಿನಲ್ಲಿ ನಿಂತಿದ್ದೀರಿ?</verse>
				<verse number="11">ಹಿಜ್ಕೀಯನು, ‘ನಮ್ಮ ದೇವರಾದ ಸರ್ವೇಶ್ವರಸ್ವಾಮಿ ಅಸ್ಸೀರಿಯಾದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು,’ ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುತ್ತಿರುವುದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವುದಕ್ಕೇ ಅಲ್ಲದೆ ಮತ್ತೇನಕ್ಕೂ ಅಲ್ಲ.</verse>
				<verse number="12">ಹಿಜ್ಕೀಯನು ಒಂದೇ ಬಲಿಪೀಠದ ಮುಂದೆ ಆರಾಧನೆಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ ಜೆರುಸಲೇಮಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿದನು ಅಲ್ಲವೆ?</verse>
				<verse number="13">ನಾನೂ ನನ್ನ ತಂದೆತಾತಂದಿರೂ ಎಲ್ಲಾ ದೇಶಗಳ ಜನಾಂಗಗಳಿಗೆ ಮಾಡಿದ್ದನ್ನು ನೀವು ಕೇಳಲಿಲ್ಲವೋ? ಆ ಜನಾಂಗಗಳ ದೇವತೆಗಳಿಗೆ ಅವರ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸುವುದಕ್ಕೆ ಶಕ್ತಿಯಿತ್ತೋ?</verse>
				<verse number="14">ನನ್ನ ತಂದೆತಾತಂದಿರು ನಾಶಮಾಡಿಬಿಟ್ಟ ಆ ರಾಜ್ಯಗಳ ದೇವರುಗಳಲ್ಲಿ ಯಾವನು ತಾನೆ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸುವುದಕ್ಕೆ ಸಮರ್ಥನಾಗಿದ್ದನು? ಹೀಗಿರುವಲ್ಲಿ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವುದಕ್ಕೆ ಶಕ್ತನಾಗಿರುತ್ತಾನೋ?</verse>
				<verse number="15">ನೀವು ಹಿಜ್ಕೀಯನಿಂದ ಮರುಳಾಗಿ ಮೋಸಹೋಗಬೇಡಿ; ಅವನನ್ನು ನಂಬಲೂಬೇಡಿ. ಯಾವ ರಾಜ್ಯಜನಾಂಗಗಳ ದೇವತೆಯೂ ತನ್ನ ಪ್ರಜೆಯನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆಹೋದರು. ಅಂದ ಮೇಲೆ, ನಿಮ್ಮ ದೇವರಂಥವನು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಬಲ್ಲನೇ?\.</verse>
				<verse number="16">ದೇವರಾದ ಸರ್ವೇಶ್ವರನಿಗೂ ಅವರ ಸೇವಕನಾದ ಹಿಜ್ಕೀಯನಿಗೂ ವಿರೋಧವಾದ ಈ ಮೊದಲಾದ ಮಾತುಗಳನ್ನು ಸನ್ಹೇರೀಬನು ತನ್ನ ಸೇವಕರ ಮುಖಾಂತರ ಹೇಳಿಕಳುಹಿಸಿದ್ದನು;</verse>
				<verse number="17">ಅಷ್ಟುಮಾತ್ರವಲ್ಲ, ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ನಿಂದಿಸಿ ದೂಷಿಸುವುದಕ್ಕಾಗಿ ‘ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆಹೋದಂತೆ ಹಿಜ್ಕೀಯನ ದೇವರೂ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸಲಾರನು’ ಎಂಬುದಾಗಿ ಪತ್ರದಲ್ಲಿ ಬರೆದು ಕಳುಹಿಸಿದ್ದನು.</verse>
				<verse number="18">ಜೆರುಸಲೇಮಿಗೆ ಬಂದ ಆ ಅಸ್ಸೀರಿಯದವರು ಗೋಡೆಯ ಮೇಲಿದ್ದ ಜನರನ್ನು ಬೆದರಿಸಿ, ಅಂಜಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳಲು</verse>
				<verse number="19">ಜೆರುಸಲೇಮಿನ ದೇವರು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳ ಜನರ ದೇವತೆಗಳಿಗೆ ಸಮಾನನಾಗಿರುತ್ತಾನೆ, ಎಂಬ ಅರ್ಥದಲ್ಲಿ ಅವರ ಬಗ್ಗೆ ಗಟ್ಟಿಯಾಗಿ ಕೂಗಿ ಹೇಳಿದರು; ಆ ಜನರೊಡನೆ ಹಿಬ್ರುಭಾಷೆಯಲ್ಲೆ ಮಾತಾಡಿದರು.</verse>
				<verse number="20">ಈ ಕಾರಣ ಅರಸ ಹಿಜ್ಕೀಯನು ಹಾಗು ಆಮೋಚನ ಮಗ ಯೆಶಾಯನೆಂಬ ಪ್ರವಾದಿಯು ಪರಲೋಕಕ್ಕೆ ಮೊರೆಯಿಟ್ಟು ಪ್ರಾರ್ಥಿಸಿದರು. ಸರ್ವೇಶ್ವರಸ್ವಾಮಿ ದೂತನನ್ನು ಕಳುಹಿಸಿ</verse>
				<verse number="21">ಅಸ್ಸೀರಿಯದ ಅರಸನ ದಂಡಿನಲ್ಲಿದ್ದ ಎಲ್ಲ ಶೂರರನ್ನೂ ನಾಯಕರನ್ನೂ ಅಧಿಪತಿಗಳನ್ನೂ ಸಂಹರಿಸಿದರು; ಆ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದರು.</verse>
				<verse number="22">ಹೀಗೆ ಸರ್ವೇಶ್ವರ, ಹಿಜ್ಕೀಯನನ್ನೂ ಜೆರುಸಲೇಮಿನವರನ್ನೂ ಅಸ್ಸೀರಿಯದ ಅರಸ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದರು.</verse>
				<verse number="23">ಅನೇಕರು ಸರ್ವೇಶ್ವರನಿಗೆ ಕಾಣಿಕೆಗಳನ್ನೂ ಜುದೇಯದ ಅರಸ ಹಿಜ್ಕೀಯನಿಗೆ ಶ್ರೇಷ್ಠವಸ್ತುಗಳನ್ನೂ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲ ರಾಷ್ಟ್ರಗಳವರು ಹಿಜ್ಕೀಯನನ್ನು ಮಹಾನ್‍ವ್ಯಕ್ತಿಯೆಂದು ಸನ್ಮಾನಿಸುತ್ತಿದ್ದರು.</verse>
				<verse number="24">ಕ್ರಮೇಣ ಹಿಜ್ಕೀಯನು ಮರಣಕರ ರೋಗಕ್ಕೆ ಗುರಿಯಾದನು. ಆಗ ಅವನು ದೇವರನ್ನು ಪ್ರಾರ್ಥಿಸಲು ಅವರು ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದರು.</verse>
				<verse number="25">ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದ್ದರಿಂದ ಜುದೇಯದ ಮೇಲೂ ಜೆರುಸಲೇಮಿನವರ ಮೇಲೂ ದೇವರ ಕೋಪವೆರಗಿತು.</verse>
				<verse number="26">ಆಗ ಹಿಜ್ಕೀಯನ ಗರ್ವ ಇಳಿಯಿತು; ಜೆರುಸಲೇಮಿನವರೊಡನೆ ಅವನು ದೀನಮನಸ್ಕನಾದನು. ಈ ಕಾರಣ ಅವನ ಜೀವಮಾನದಲ್ಲಿ ಸರ್ವೇಶ್ವರನ ಕೋಪ ಅವರ ಮೇಲೆ ಬರಲಿಲ್ಲ.</verse>
				<verse number="27">ಹಿಜ್ಕೀಯನಿಗೆ ಅತ್ಯಧಿಕವಾದ ಧನಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕಾಗಿ ಭಂಡಾರಗಳನ್ನು ಏರ್ಪಡಿಸಿದನು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು;</verse>
				<verse number="28">ಆಯಾಜಾತಿಯ ಪಶುಗಳಿಗಾಗಿ ಕೊಟ್ಟಿಗೆಯನ್ನೂ ಆಡುಕುರಿಗಳಿಗಾಗಿ ಹಟ್ಟಿಗಳನ್ನೂ ಸಿದ್ಧಮಾಡಿಸಿಕೊಂಡನು.</verse>
				<verse number="29">ಇದಲ್ಲದೆ, ಪಟ್ಟಣಗಳನ್ನು ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು.</verse>
				<verse number="30">ಮೇಲಣ ಗೀಹೋನ್ ಎಂಬ ಬುಗ್ಗೆಗೆ ಕಟ್ಟೆಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪೂರ್ವದಿಕ್ಕಿನ ಕಣಿವೆಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲ ಕಾರ್ಯಗಳಲ್ಲೂ ಯಶಸ್ವಿ ಆದನು.</verse>
				<verse number="31">ಆದುದರಿಂದ ಅವನ ನಾಡಿನಲ್ಲಾದ ಅದ್ಭುತಕರವಾದ ಮಾರ್ಪಾಟುಗಳನ್ನು ಪರಿಶೀಲಿಸುವುದಕ್ಕಾಗಿ ಬಾಬಿಲೋನಿಯದ ಅಧಿಪತಿಗಳು ರಾಯಭಾರಿಗಳನ್ನು ಅವನ ಬಳಿಗೆ ಕಳುಹಿಸಿದರು. ಅವರು ಬಂದಾಗ, ಅವನನ್ನು ಪರೀಕ್ಷಿಸುವುದಕ್ಕಾಗಿ ಹಾಗು ಅವನ ಅಂತರಾಳವನ್ನು ತಿಳಿದುಕೊಳ್ಳುವುದಕ್ಕಾಗಿ ದೇವರು ಅವನನ್ನು ಕೈಬಿಟ್ಟರು.</verse>
				<verse number="32">ಹಿಜ್ಕೀಯನ ಉಳಿದ ಚರಿತ್ರೆಯನ್ನೂ ಅವನ ಭಕ್ತಿಕಾರ್ಯಗಳನ್ನೂ ಆಮೋಚನ ಮಗ ಯೆಶಾಯನ ದರ್ಶನ ಗ್ರಂಥದಲ್ಲಿ ಹಾಗು ಯೆಹೂದ್ಯರ ಮತ್ತು ಇಸ್ರಯೇಲರ ರಾಜಗ್ರಂಥದಲ್ಲಿ ಬರೆಯಲಾಗಿದೆ.</verse>
				<verse number="33">ಹಿಜ್ಕೀಯನು ಮೃತನಾಗಿ ಪಿತೃಗಳ ಬಳಿಗೆ ಸೇರಲು, ಅವನ ಶವವನ್ನು ದಾವೀದವಂಶದವರ ಕುಟುಂಬದ ಸ್ಮಶಾನಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಶವಸಂಸ್ಕಾರ ನಡೆಯುವಾಗ ಎಲ್ಲಾ ಯೆಹೂದ್ಯರೂ ಜೆರುಸಲೇಮಿನವರೂ ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗ ಮನಸ್ಸೆ ಅರಸನಾದನು.</verse>
			</chapter>
			<chapter number="33">
				<verse number="1">ಮನಸ್ಸೆ ಅರಸನಾದಾಗ ಹನ್ನೆರಡು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಐವತ್ತೈದು ವರ್ಷ ಆಳಿದನು.</verse>
				<verse number="2">ಸರ್ವೇಶ್ವರ ಇಸ್ರಯೇಲರ ನಾಡಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯಕಾರ್ಯಗಳನ್ನು ಅವನು ಅನುಸರಿಸಿ ಆ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.</verse>
				<verse number="3">ತನ್ನ ತಂದೆ ಹಿಜ್ಕೀಯನು ತೆಗೆದುಹಾಕಿದ್ದ ಪೂಜಾಸ್ಥಳಗಳನ್ನು ಮತ್ತೆ ಸ್ಥಾಪಿಸಿದನು. ಬಾಳ್‍ದೇವತೆಗಳಿಗಾಗಿ ಬಲಿಪೀಠಗಳನ್ನು ಕಟ್ಟಿಸಿದನು; ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿ, ನಕ್ಷತ್ರಮಂಡಲಕ್ಕೆ ಕೈಮುಗಿದು ಆರಾಧಿಸಿದನು.</verse>
				<verse number="4">ಸರ್ವೇಶ್ವರ ಜೆರುಸಲೇಮಿನಲ್ಲಿ ತನ್ನ ಹೆಸರನ್ನು ಸದಾಕಾಲ ಸ್ಥಾಪಿಸುವುದಕ್ಕಾಗಿ</verse>
				<verse number="5">ಆರಿಸಿಕೊಂಡ ಆಲಯದ ಎರಡು ಪ್ರಾಕಾರಗಳಲ್ಲಿಯೂ ಸರ್ವ ನಕ್ಷತ್ರಮಂಡಲಕ್ಕಾಗಿ ಬಲಿಪೀಠಗಳನ್ನು ಕಟ್ಟಿಸಿದನು.</verse>
				<verse number="6">ಇದಲ್ಲದೆ, ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಲಿಯಗ್ನಿ ಪರೀಕ್ಷೆಗೆ ಗುರಿಪಡಿಸಿದನು; ಕಣಿ ಹೇಳಿಸುವುದು, ಶಕುನ ನೋಡಿಸುವುದು, ತಂತ್ರಮಂತ್ರಗಳನ್ನು ಮಾಡಿಸುವುದು, ಭೂತಪ್ರೇತಗಳನ್ನು ವಿಚಾರಿಸುವವರನ್ನು ಸಂಪರ್ಕಿಸುವುದು ಇವೇ ಮೊದಲಾದ ದುಷ್ಕೃತ್ಯಗಳಿಂದ ಸರ್ವೇಶ್ವರನಿಗೆ ಕೋಪ ಬರಿಸಿದನು.</verse>
				<verse number="7">ತಾನು ಮಾಡಿಸಿದ್ದ ವಿಗ್ರಹಸ್ತಂಭವನ್ನು ದೇವಾಲಯದಲ್ಲಿಡಿಸಿದನು; ಸರ್ವೇಶ್ವರ ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗ ಸೊಲೊಮೋನನಿಗೂ, “ಇಸ್ರಯೇಲರು, ತಮಗೆ ಮೋಶೆಯ ಮುಖಾಂತರ ಕೊಡಲಾದ, ನನ್ನ ಎಲ್ಲ ಧರ್ಮಶಾಸ್ತ್ರವಿಧಿನ್ಯಾಯಗಳನ್ನು ಅನುಸರಿಸಿ ನಡೆಯುವುದಾದರೆ, ನನ್ನ ನಾಮ ಮಹತ್ತು ಈ ದೇವಾಲಯದಲ್ಲಿ, ಇಸ್ರಯೇಲರ ಎಲ್ಲ ಊರುಗಳಲ್ಲಿ ಹಾಗು ನನಗೆ ಪ್ರಿಯವಾದ ಜೆರುಸಲೇಮಿನಲ್ಲಿ ಸದಾಕಾಲ ಇರುವುದು;</verse>
				<verse number="8">ಅದು ಮಾತ್ರವಲ್ಲ, ಇಸ್ರಯೇಲರು ಇನ್ನು ಮುಂದೆ ದೇಶಭ್ರಷ್ಟರಾಗಿರದೆ ತಮ್ಮ ಪಿತೃಗಳಿಗೆ ಕೊಡಲಾದ ನಾಡಿನಲ್ಲಿಯೇ ವಾಸವಾಗಿರುವಂತೆ ಮಾಡುವೆನು,” ಎಂದು ಹೇಳಿದ್ದರು.</verse>
				<verse number="9">ಆದರೆ ಯೆಹೂದ್ಯರೂ ಜೆರುಸಲೇಮಿನವರೂ ಮನಸ್ಸೆಯಿಂದ ಪ್ರಚೋದಿತರಾಗಿ ಇಸ್ರಯೇಲರ ಮುಂದೆಯೇ ಸರ್ವೇಶ್ವರನಿಂದ ನಾಶಹೊಂದಿದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.</verse>
				<verse number="10">ಸರ್ವೇಶ್ವರಸ್ವಾಮಿ ಮನಸ್ಸೆಯನ್ನೂ ಅವನ ಪ್ರಜೆಗಳನ್ನೂ ಎಚ್ಚರಿಸಿದರೂ ಅವರು ಲಕ್ಷಿಸಲಿಲ್ಲ.</verse>
				<verse number="11">ಆದುದರಿಂದ ಅಸ್ಸೀರಿಯದ ಅರಸನ ಸೈನ್ಯಾಧಿಪತಿಗಳನ್ನು ಅವನ ಮೇಲೆ ಬರಮಾಡಿದರು. ಆ ಸೇನಾಧಿಪತಿಗಳು ಮನಸ್ಸೆಯನ್ನು ಹಿಡಿದು ಅವನನ್ನು ಬಂಧಿಸಿ, ಬೇಡಿಹಾಕಿ, ಬಾಬಿಲೋನಿಗೆ ಒಯ್ದರು.</verse>
				<verse number="12">ಆದರೆ ಆ ಕಷ್ಟದಲ್ಲಿ ಮನಸ್ಸೆ ತನ್ನ ದೇವರಾದ ಸರ್ವೇಶ್ವರನ ಪ್ರಸನ್ನತೆಯನ್ನು ಬೇಡಿಕೊಂಡನು; ತನ್ನ ಪಿತೃಗಳ ದೇವರ ಮುಂದೆ ತನ್ನನ್ನೇ ಬಹಳವಾಗಿ ತಗ್ಗಿಸಿಕೊಂಡು ಅವರನ್ನು ಪ್ರಾರ್ಥಿಸಿದನು.</verse>
				<verse number="13">ಅವರು ಆಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿದರು. ಅವನನ್ನು ಮರಳಿ ಜೆರುಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟರು. ಆಗ ಸರ್ವೇಶ್ವರಸ್ವಾಮಿಯೇ ದೇವರು ಎಂಬುದು ಅವನಿಗೆ ಮನದಟ್ಟಾಯಿತು.</verse>
				<verse number="14">ಇದಾದ ಮೇಲೆ, ಅವನು ಗೀಹೋನ್ ಬುಗ್ಗೆಯ ದಕ್ಷಿಣದ ಕಡೆಯಿಂದ ಮೀನುಬಾಗಿಲಿನ ಮಾರ್ಗದವರೆಗಿರುವ ಕಣಿವೆಯಲ್ಲಿ, ಓಫೆಲ್ ಗುಡ್ಡದ ಸುತ್ತಲೂ ಇದ್ದ ದಾವೀದನಗರದ ಹೊರಗಿನ ಗೋಡೆಯನ್ನು ಇನ್ನೂ ಎತ್ತರವಾಗಿ ಕಟ್ಟಿಸಿದನು. ಜುದೇಯ ನಾಡಿನ ಕೋಟೆಕೊತ್ತಲುಗಳುಳ್ಳ ಎಲ್ಲ ಪಟ್ಟಣಗಳಲ್ಲಿ ಸೇನಾಪತಿಗಳನ್ನು ಇರಿಸಿದನು.</verse>
				<verse number="15">ಅನ್ಯದೇವತಾ ಪ್ರತಿಮೆಗಳನ್ನು ಹಾಗು ತಾನು ಮಾಡಿಸಿದ್ದ ಸ್ತಂಭವನ್ನು ಸರ್ವೇಶ್ವರನ ಆಲಯದಿಂದ ತೆಗಿಸಿದನು. ಸರ್ವೇಶ್ವರನ ಮಂದಿರವಿರುವ ಗುಡ್ಡದಲ್ಲೂ ಜೆರುಸಲೇಮಿನಲ್ಲೂ ಕಟ್ಟಿಸಿದ್ದ ಎಲ್ಲ ಯಜ್ಞವೇದಿಗಳನ್ನು ಕೆಡವಿ, ಅವುಗಳನ್ನು ಪಟ್ಟಣದ ಹೊರಗೆ ಹಾಕಿಸಿದನು.</verse>
				<verse number="16">ಸರ್ವೇಶ್ವರನ ಬಲಿಪೀಠವನ್ನು ಪುನಃ ಕಟ್ಟಿಸಿ, ಅದರ ಮೇಲೆ ಶಾಂತಿಸಮಾಧಾನ ಬಲಿಗಳನ್ನೂ ಕೃತಜ್ಞತಾ ಬಲಿಗಳನ್ನೂ ಅರ್ಪಿಸಿದನು. ಇಸ್ರಯೇಲ್ ದೇವರಾದ ಸರ್ವೇಶ್ವರನನ್ನೇ ಅವಲಂಬಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.</verse>
				<verse number="17">ಅವರು ಈ ಪ್ರಕಾರ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರಿಗೇ ಬಲಿಯನ್ನು ಅರ್ಪಿಸುವವರಾದರು. ಅವರು ಆ ಬಲಿಗಳನ್ನು ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು.</verse>
				<verse number="18">ಮನಸ್ಸೆಯ ಉಳಿದ ಚರಿತ್ರೆ, ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆ, ಹಾಗು ದರ್ಶಿಗಳು ಇಸ್ರಯೇಲ್ ದೇವರಾದ ಸರ್ವೇಶ್ವರನ ಹೆಸರಿನಲ್ಲಿ ಅವನಿಗೆ ಹೇಳಿದ ಮಾತುಗಳು, ಇವು ಇಸ್ರಯೇಲ್ ರಾಜರ ಇತಿಹಾಸದಲ್ಲಿ ದಾಖಲಾಗಿ ಇವೆ.</verse>
				<verse number="19">ಅವನು ದೇವರಿಗೆ ಮಾಡಿದ ಪ್ರಾರ್ಥನೆ, ಅದಕ್ಕೆ ದೊರೆತ ಸದುತ್ತರ ಹಾಗು ಅವನು ದೀನಮನಸ್ಕನಾಗುವುದಕ್ಕೆ ಮುಂಚೆ ಮಾಡಿದ ಅಪರಾಧ, ದ್ರೋಹಗಳು, ಹಾಗು ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ, ಅಶೇರಸ್ತಂಭ ವಿಗ್ರಹ, ಇವುಗಳನ್ನು ನಿಲ್ಲಿಸಿದ್ದು, ಇವುಗಳು ದರ್ಶಿಗಳ ಚರಿತ್ರೆಯಲ್ಲಿ ಲಿಖಿತವಾಗಿವೆ.</verse>
				<verse number="20">ಮನಸ್ಸೆ ಮೃತನಾಗಿ ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಮೋನನು ಅರಸನಾದನು.</verse>
				<verse number="21">ಆಮೋನನು ಅರಸನಾದಾಗ ಅವನಿಗೆ ಇಪ್ಪತ್ತೆರಡು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಎರಡು ವರ್ಷ ಆಳಿದನು.</verse>
				<verse number="22">ತನ್ನ ತಂದೆ ಮನಸ್ಸೆಯ ಹಾಗೆಯೇ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆ ಮನಸ್ಸೆ ಮಾಡಿಸಿದ ಎಲ್ಲಾ ವಿಗ್ರಹಗಳಿಗೆ ಬಲಿ ಅರ್ಪಿಸಿ ಅವುಗಳನ್ನು ಪೂಜಿಸಿದನು.</verse>
				<verse number="23">ಆಮೋನನ ತಂದೆ ಮನಸ್ಸೆ ಸರ್ವೇಶ್ವರನ ಮುಂದೆ ತನ್ನನ್ನೇ ತಗ್ಗಿಸಿಕೊಂಡಿದ್ದನು. ಆಮೋನನಾದರೋ ತನ್ನನ್ನೇ ತಗ್ಗಿಸಿಕೊಳ್ಳದೆ ಮಹಾಪರಾಧಿಯಾದನು.</verse>
				<verse number="24">ಅವನ ಸೇವಕರು ಅವನಿಗೆ ವಿರುದ್ಧ ಒಳಸಂಚುಮಾಡಿ ಅವನನ್ನು ಅರಮನೆಯಲ್ಲಿಯೇ ಕೊಂದರು.</verse>
				<verse number="25">ಆದರೆ ನಾಡಿನ ಜನರು ಅರಸ ಆಮೋನನಿಗೆ ವಿರುದ್ಧ ಒಳಸಂಚುಮಾಡಿದವರನ್ನೆಲ್ಲಾ ಕೊಂದುಹಾಕಿ, ಆಮೋನನಿಗೆ ಬದಲಾಗಿ ಅವನ ಮಗ ಯೋಷೀಯನನ್ನು ಅರಸನನ್ನಾಗಿ ಮಾಡಿದರು.</verse>
			</chapter>
			<chapter number="34">
				<verse number="1">ಯೋಷೀಯನು ಅರಸನಾದಾಗ ಅವನಿಗೆ ಎಂಟು ವರ್ಷ ಪ್ರಾಯ. ಅವನು ಜೆರುಸಲೇಮಿನಲ್ಲಿ ಮೂವತ್ತೊಂದು ವರ್ಷ ಆಳಿದನು.</verse>
				<verse number="2">ಅವನು ಎಡಕ್ಕಾಗಲಿ ಬಲಕ್ಕಾಗಲಿ ಹೋಗದೆ ತನ್ನ ಪೂರ್ವಜ ದಾವೀದನ ಮಾರ್ಗದಲ್ಲೇ ನೇರವಾಗಿ ಸರ್ವೇಶ್ವರನ ಚಿತ್ತಾನುಸಾರ ನಡೆದನು.</verse>
				<verse number="3">ಯೋಷೀಯನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ, ಇನ್ನೂ ಯೌವನಸ್ಥನಾಗಿರುವಾಗಲೇ, ತನ್ನ ಪೂರ್ವಜನಾದ ದಾವೀದನ ದೇವರನ್ನು ಅವಲಂಬಿಸುವವನಾದನು; ಹನ್ನೆರಡನೆಯ ವರ್ಷ ಜುದೇಯದಲ್ಲೂ, ಜೆರುಸಲೇಮಿನಲ್ಲೂ ಇದ್ದ ಪೂಜಾಸ್ಥಳಗಳನ್ನು, ಆಶೇರಸ್ತಂಭಗಳನ್ನು ಹಾಗು ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನು ತೆಗೆದುಹಾಕಿ ನಾಡನ್ನು ಶುದ್ಧಪಡಿಸಿದನು.</verse>
				<verse number="4">ಇದಲ್ಲದೆ, ಅವನು ಬಾಳ್‍ದೇವತೆಗಳ ಬಲಿಪೀಠಗಳನ್ನು ತನ್ನೆದುರಿನಲ್ಲೇ ಹಾಳುಮಾಡಿಸಿ, ಅವುಗಳ ಮೇಲಿದ್ದ ಸೂರ್ಯಸ್ತಂಭಗಳನ್ನು ಕೆಡವಿಸಿ, ಅಶೇರಸ್ತಂಭ, ಕೆತ್ತಿದ ಮತ್ತು ಎರಕದ ವಿಗ್ರಹ, ಇವುಗಳನ್ನು ಒಡಿಸಿ, ಪುಡಿಪುಡಿಮಾಡಿಸಿ, ಅವುಗಳಿಗೆ ಬಲಿಯರ್ಪಿಸಿದವರ ಸಮಾಧಿಗಳ ಮೇಲೆ ಆ ಧೂಳನ್ನು ಚೆಲ್ಲಿಸಿದನು.</verse>
				<verse number="5">ಅವುಗಳ ಪೂಜಾರಿಗಳ ಎಲುಬುಗಳನ್ನು ಆ ಬಲಿಪೀಠಗಳ ಮೇಲೆ ಸುಡಿಸಿ, ಜುದೇಯದ ಮತ್ತು ಜೆರುಸಲೇಮಿನ ಅಶುದ್ಧತ್ವವನ್ನೆಲ್ಲಾ ಪರಿಹರಿಸಿದನು.</verse>
				<verse number="6">ಮನಸ್ಸೆ, ಎಫ್ರಯಿಮ್, ಸಿಮೆಯೋನ್, ನಫ್ತಾಲಿ ಪ್ರಾಂತ್ಯಗಳ ಊರುಗಳ ಸುತ್ತಲು ಹಾಳುಬೀಳುಗಳಲ್ಲಿದ್ದ ಬಲಿಪೀಠಗಳನ್ನು ಕೆಡವಿಸಿದನು;</verse>
				<verse number="7">ಆಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಒಡೆಸಿದನು, ಇಸ್ರಯೇಲ್ ನಾಡಿನಲ್ಲಿದ್ದ ಸೂರ್ಯಸ್ತಂಭಗಳನ್ನು ಪುಡಿಪುಡಿಮಾಡಿಸಿ ಜೆರುಸಲೇಮಿಗೆ ಹಿಂದಿರುಗಿದನು.</verse>
				<verse number="8">ಅವನು ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ನಾಡನ್ನೂ ದೇವಾಲಯವನ್ನೂ ಶುದ್ಧಿಪಡಿಸಿದ ಮೇಲೆ ತನ್ನ ದೇವರಾದ ಸರ್ವೇಶ್ವರನ ಆಲಯವನ್ನು ದುರಸ್ತಿಮಾಡಿಸುವುದಕ್ಕಾಗಿ ಅಚಲ್ಯನ ಮಗ ಶಾಫಾನನನ್ನು ಪುರಾಧಿಕಾರಿಯಾದ ಮಾಸೇಯನನ್ನು ಮತ್ತು ಮುಖ್ಯಮಂತ್ರಿಯಾಗಿದ್ದ ಯೋವಾಹಾಜನ ಮಗ ಯೋವಾಹನನ್ನು ಕಳುಹಿಸಿದನು.</verse>
				<verse number="9">ಇವರು ಮಹಾಯಾಜಕ ಹಿಲ್ಕೀಯನ ಬಳಿಗೆ ಹೋಗಿ, ದೇವಾಲಯಕ್ಕಾಗಿ ಸಂಗ್ರಹವಾದ ಹಣವನ್ನು, ಅಂದರೆ, ದ್ವಾರಪಾಲಕರಾದ ಲೇವಿಯರು ಮನಸ್ಸೆ, ಎಫ್ರಯಿಮ್ ಮುಂತಾದ ಇಸ್ರಯೇಲ್‍ಕುಲಗಳಲ್ಲಿ ಉಳಿದವರಿಂದ ಎಲ್ಲ ಯೆಹೂದ ಬೆನ್ಯಾಮೀನ್ಯರಿಂದ ಹಾಗು ಜೆರುಸಲೇಮಿನವರಿಂದ ಸಂಗ್ರಹಿಸಿದ್ದ ಹಣವನ್ನು</verse>
				<verse number="10">ದೇವಾಲಯದ ಕೆಲಸಮಾಡಿಸುವವರಿಗೆ ಕೊಡಲೆಂದು, ಅವನಿಗೆ ಒಪ್ಪಿಸಿದರು. ದೇವಾಲಯದ ಕೆಲಸಮಾಡಿಸುತ್ತಿದ್ದವರು</verse>
				<verse number="11">ಕೆತ್ತಿದ ಕಲ್ಲು, ಜೋಡಿಸತಕ್ಕ ತೊಲೆ ಇವುಗಳನ್ನು ಕೊಂಡುಕೊಳ್ಳಲು ಹಾಗು ಜುದೇಯ ಅರಸರ ಅಲಕ್ಷ್ಯದಿಂದ ಹಾಳಾಗಿದ್ದ ಕಟ್ಟಡಗಳಿಗೆ ಮಾಳಿಗೆ ಕಟ್ಟಲು, ಅಂತು ದೇವಾಲಯವನ್ನು ದುರಸ್ತಿಮಾಡಿ ಭದ್ರಪಡಿಸಲು ಬಡಗಿಗಳಿಗೂ ಶಿಲ್ಪಿಗಳಿಗೂ ಆ ಹಣವನ್ನು ಕೊಟ್ಟರು.</verse>
				<verse number="12">ಕೆಲಸಗಾರರು ನಂಬಿಗಸ್ತರಾಗಿದ್ದರು; ಮೆರಾರಿಯರಲ್ಲಿ ಯಹತ್, ಓಬದ್ಯ ಎಂಬ ಲೇವಿಯರೂ, ಕೆಹಾತ್ಯರಲ್ಲಿ ಜೆಕರ್ಯ, ಮೆಷುಲ್ಲಾಮ್ ಎಂಬ ಲೇವಿಯರೂ ಅವರ ಮೇಲ್ವಿಚಾರಕರಾಗಿದ್ದರು.</verse>
				<verse number="13">ಗಾಯನ ನಿಪುಣರಾದ ಲೇವಿಯರೆಲ್ಲರೂ ಹೊರೆಹೊರುವವರ ಮೇಲ್ವಿಚಾರಕರಾಗಿದ್ದು ಎಲ್ಲಾ ವಿಧವಾದ ಕೆಲಸಮಾಡುವವರನ್ನು ನೋಡಿಕೊಳ್ಳುತ್ತಿದ್ದರು; ಎಲ್ಲ ಲೇಖಕರು, ಅಧಿಕಾರಿಗಳು ಹಾಗು ದ್ವಾರಪಾಲಕರು ಲೇವಿಯರೇ ಆಗಿದ್ದರು.</verse>
				<verse number="14">ಸರ್ವೇಶ್ವರನ ಆಲಯದಲ್ಲಿ ಸಂಗ್ರಹವಾಗಿದ್ದ ಹಣವನ್ನು ಹೊರಗೆ ತೆಗೆಯುವಾಗ ಮೋಶೆಯ ಮುಖಾಂತರ ಕೊಡಲಾಗಿದ್ದ ಸರ್ವೇಶ್ವರನ ಧರ್ಮೋಪದೇಶದ ಗ್ರಂಥವು ಯಾಜಕ ಹಿಲ್ಕೀಯನಿಗೆ ಸಿಕ್ಕಿತು.</verse>
				<verse number="15">ಹಿಲ್ಕೀಯನು ಲೇಖಕನಾದ ಶಾಫಾನನಿಗೆ, “ಸರ್ವೇಶ್ವರನ ಆಲಯದಲ್ಲಿ ನನಗೆ ಧರ್ಮೋಪದೇಶಗ್ರಂಥವು ಸಿಕ್ಕಿದೆ,” ಎಂದು ಹೇಳಿ ಅದನ್ನು ಅವನ ಕೈಗೆ ಕೊಟ್ಟನು.</verse>
				<verse number="16">ಶಾಫಾನನು ಆ ಗ್ರಂಥವನ್ನು ಅರಸನ ಬಳಿಗೆ ತೆಗೆದುಕೊಂಡು ಹೋಗಿ, “ನೀವು ಆಜ್ಞಾಪಿಸಿದ್ದೆಲ್ಲವನ್ನೂ ನಿಮ್ಮ ಸೇವಕರು ಮಾಡುತ್ತಿದ್ದಾರೆ.</verse>
				<verse number="17">ದೇವಾಲಯದಲ್ಲಿ ಸಂಗ್ರಹವಾದ ಹಣವನ್ನು ತೆಗೆದು ಮೇಸ್ತ್ರಿಗಳಿಗೂ ಕೆಲಸಮಾಡುವವರಿಗೂ ಒಪ್ಪಿಸಿದ್ದಾರೆ,” ಎಂದು ತಿಳಿಸಿದನು.</verse>
				<verse number="18">ಇದಲ್ಲದೆ, ಲೇಖಕ ಶಾಫಾನನು ಅರಸನಿಗೆ, “ಯಾಜಕ ಹಿಲ್ಕೀಯ ನನಗೊಂದು ಗ್ರಂಥವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ಅವನ ಮುಂದೆ ಅದನ್ನು ಓದಿದನು.</verse>
				<verse number="19">ಅರಸ ಯೋಷೀಯನು ಧರ್ಮಶಾಸ್ತ್ರದ ವಾಕ್ಯಗಳನ್ನು ಕೇಳಿದಾಗ,</verse>
				<verse number="20">“ದುಃಖಾವೇಶದಿಂದ ಬಟ್ಟೆಗಳನ್ನು ಹರಿದುಕೊಂಡನು. ಹಿಲ್ಕೀಯ, ಶಾಫಾನನ ಮಗ ಅಹೀಕಾಮ್, ಮೀಕನ ಮಗ ಅಬ್ದೋನ್, ಲೇಖಕ ಶಾಫಾನ್, ಸಹಕಾರಿಯಾದ ಅಸಾಯ ಎಂಬುವರಿಗೆ,</verse>
				<verse number="21">“ನಮ್ಮ ಪೂರ್ವಜರು ಈ ಗ್ರಂಥದಲ್ಲಿ ಬರೆದಿರುವ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಕೈಗೊಳ್ಳದೆ ಹೋದುದರಿಂದಲೇ ಸರ್ವೇಶ್ವರ ತಮ್ಮ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾರೆ. ಆದುದರಿಂದ ನೀವು ನನ್ನ ಪರವಾಗಿ, ಹಾಗು ಇಸ್ರಯೇಲರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರ ಪರವಾಗಿ ಸರ್ವೇಶ್ವರನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಬಗ್ಗೆ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.</verse>
				<verse number="22">ಆಗ ಹಿಲ್ಕೀಯನೂ ಅರಸನ ಜನರೂ ಹುಲ್ದ ಎಂಬ ಪ್ರವಾದಿನಿಯ ಬಳಿಗೆ ಹೋಗಿ, ಅಪ್ಪಣೆಯಾದಂತೆ ಆಕೆಯ ಬಳಿ ವಿಚಾರಿಸಿದರು. ಹಸ್ತನ ಮೊಮ್ಮಗನೂ ತೊಕ್ಹತನ ಮಗನೂ ರಾಜವಸ್ತ್ರಾಗಾರದ ಅಧಿಪತಿಯೂ ಆಗಿದ್ದ ಶಲ್ಲೂಮನು ಆಕೆಯ ಗಂಡ. ಆಕೆ ಜೆರುಸಲೇಮಿನ ಎರಡನೆಯ ಕೇರಿಯಲ್ಲಿ ವಾಸವಾಗಿದ್ದಳು.</verse>
				<verse number="23">ಹುಲ್ದಳು ಅವರಿಗೆ, “ನಿಮ್ಮನ್ನು ಕಳುಹಿಸಿದವರಿಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ಈ ಮಾತುಗಳನ್ನು ತಿಳಿಸಿರಿ:</verse>
				<verse number="24">‘ಈ ನಾಡಿನ ಮೇಲೂ ಜನರ ಮೇಲೂ, ಜುದೇಯದ ಅರಸನ ಹಿಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲ ಶಾಪಗಳನ್ನು ಬರಮಾಡುವೆನು;</verse>
				<verse number="25">ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿ ಎತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ; ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯುತ್ತಿರುವುದು ಆರಿಹೋಗುವುದಿಲ್ಲ,” ಎನ್ನುತ್ತಾರೆ.</verse>
				<verse number="26">ತಾನು ಕೇಳಿದ ವಾಕ್ಯಗಳ ಬಗ್ಗೆ, ಸರ್ವೇಶ್ವರನ ಬಳಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಜುದೇಯದ ಅರಸನಿಗೆ ನೀವು ತಿಳಿಸಬೇಕಾದ ಮಾತೇನೆಂದರೆ: ‘ಇಸ್ರಯೇಲ್ ದೇವರಾದ ಸರ್ವೇಶ್ವರ ಇಂತೆನ್ನುತ್ತಾರೆ;</verse>
				<verse number="27">ಈ ನಾಡಿನ ಮತ್ತು ಇದರ ನಿವಾಸಿಗಳ ಬಗ್ಗೆ ನಾನು ಹೇಳಿದ ಮಾತುಗಳನ್ನು ಕೇಳಿದಾಗ ನೀನು ದುಃಖಪಟ್ಟು ದೇವರಾದ ನನ್ನ ಮುಂದೆ ತಗ್ಗಿಸಿಕೊಂಡೆ; ದೀನಮನಸ್ಸಿನಿಂದ ಬಟ್ಟೆಗಳನ್ನು ಹರಿದುಕೊಂಡು ಕಣ್ಣೀರು ಸುರಿಸಿದೆ; ಆದ್ದರಿಂದ ನಿನ್ನನ್ನು ಲಕ್ಷಿಸಿದೆನು</verse>
				<verse number="28">ನಾನು ನಾಡಿನ ಮೇಲೂ ಇದರ ನಿವಾಸಿಗಳ ಮೇಲೂ ಬರಮಾಡುವ ಶಿಕ್ಷೆಗಳಲ್ಲಿ ನೀನು ಒಂದನ್ನೂ ನೋಡದೆ ಸಮಾಧಾನದಿಂದ ಮೃತಿಹೊಂದಿ ಸಮಾಧಿ ಸೇರುವಂತೆ ಅನುಗ್ರಹಿಸುವೆನು,’ ಎಂಬುದಾಗಿ ತಿಳಿಸಿರಿ,” ಎಂದು ಹೇಳಿದಳು. ಅವರು ಹಿಂದಿರುಗಿ ಬಂದು ಅರಸನಿಗೆ ಆ ಮಾತುಗಳನ್ನು ತಿಳಿಸಿದರು.</verse>
				<verse number="29">ಅನಂತರ ಅರಸನು ದೂತರ ಮುಖಾಂತರ ಜೆರುಸಲೇಮಿನ ಮತ್ತು ಜುದೇಯದ ಎಲ್ಲ ಹಿರಿಯರನ್ನು ಕೂಡಿಸಿದನು.</verse>
				<verse number="30">ಜೆರುಸಲೇಮಿನವರನ್ನು, ಬೇರೆ ಎಲ್ಲ ಯೆಹೂದ್ಯರನ್ನು, ಯಾಜಕರನ್ನು ಹಾಗು ಲೇವಿಯರನ್ನು ಕರೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋದನು. ದೊಡ್ಡವರೂ ಚಿಕ್ಕವರೂ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಸರ್ವೇಶ್ವರನ ಆಲಯದಲ್ಲಿ ಸಿಕ್ಕಿದ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿದನು.</verse>
				<verse number="31">ತನ್ನ ಸ್ಥಳದಲ್ಲೇ ನಿಂತು, ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿ ಸರ್ವೇಶ್ವರನಿಗೆ ಪ್ರಮಾಣಮಾಡಿದನು.</verse>
				<verse number="32">ಅಂತೆಯೇ ಎಲ್ಲ ಜೆರುಸಲೇಮಿನವರಿಂದಲೂ ಬೆನ್ಯಾಮೀನ್ಯರಿಂದಲೂ ಪ್ರಮಾಣಮಾಡಿಸಿದನು. ಜೆರುಸಲೇಮಿನವರು ಏಕದೇವರಾದ ತಮ್ಮ ಪೂರ್ವಜರ ದೇವರ ನಿಬಂಧನೆಯನ್ನು ಕೈಕೊಳ್ಳುವಂಥವರಾದರು.</verse>
				<verse number="33">ಯೋಷೀಯನು ಇಸ್ರಯೇಲರಿಗೆ ಸೇರಿದ ಎಲ್ಲಾ ಪ್ರಾಂತಗಳಿಂದ ಅಸಹ್ಯಮೂರ್ತಿಗಳನ್ನೆಲ್ಲಾ ತೆಗೆದುಹಾಕಿಸಿ, ಇಸ್ರಯೇಲರಲ್ಲಿ ಉಳಿದಿರುವವರು ತಮ್ಮ ದೇವರಾದ ಸರ್ವೇಶ್ವರನನ್ನು ಅವಲಂಬಿಸುವಂತೆ ಮಾಡಿದನು. ಅವನ ಜೀವಮಾನದಲ್ಲೆಲ್ಲಾ ಅವರು ತಮ್ಮ ಪೂರ್ವಜರ ದೇವರಾದ ಸರ್ವೇಶ್ವರನನ್ನು ಬಿಡದೆ ಹಿಂಬಾಲಿಸಿದರು.</verse>
			</chapter>
			<chapter number="35">
				<verse number="1">ಯೋಷೀಯನು ಸರ್ವೇಶ್ವರನಿಗೆ ಜೆರುಸಲೇಮಿನಲ್ಲಿ ಪಾಸ್ಕಹಬ್ಬವನ್ನು ಆಚರಿಸುವಂತೆ ಮಾಡಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಾಸ್ಕದ ಕುರಿಮರಿಗಳನ್ನು ವಧಿಸಿದರು.</verse>
				<verse number="2">ಯೋಷೀಯನು ಯಾಜಕರನ್ನು ಅವರವರ ಕೆಲಸಕ್ಕೆ ನೇಮಿಸಿ, ಸರ್ವೇಶ್ವರನ ಸೇವೆಮಾಡುವಂತೆ ಪ್ರೋತ್ಸಾಹಿಸಿದನು.</verse>
				<verse number="3">ಎಲ್ಲ ಇಸ್ರಯೇಲರಿಗೆ ಉಪದೇಶಿಸತಕ್ಕವರೂ ಸರ್ವೇಶ್ವರನಿಗೆ ಪ್ರತಿಷ್ಠರೂ ಆದ ಲೇವಿಯರಿಗೆ, “ದಾವೀದನ ಮಗನೂ ಇಸ್ರಯೇಲ್ ಅರಸನೂ ಆದ ಸೊಲೊಮೋನನು ಕಟ್ಟಿಸಿದ ಮಹಾದೇವಾಲಯದಲ್ಲಿ ಪವಿತ್ರ ಮಂಜೂಷವನ್ನು ಇಟ್ಟುಬಿಡಿ; ಅದನ್ನು ಹೆಗಲ ಮೇಲೆ ಹೊತ್ತುಕೊಳ್ಳುವುದು ಅವಶ್ಯವಿಲ್ಲ; ಇನ್ನು ಮುಂದೆ ನಿಮ್ಮ ದೇವರಾದ ಸರ್ವೇಶ್ವರನಿಗೂ ಅವರ ಪ್ರಜೆಗಳಾದ ಇಸ್ರಯೇಲರಿಗೂ ಸೇವೆಸಲ್ಲಿಸಿರಿ.</verse>
				<verse number="4">ಇಸ್ರಯೇಲರ ಅರಸ ದಾವೀದನೂ ಅವನ ಮಗ ಸೊಲೊಮೋನನೂ ಲಿಖಿತವಾಗಿ ನೇಮಿಸಿದಂತೆ ನಿಮ್ಮ ನಿಮ್ಮ ಗೋತ್ರವರ್ಗಗಳ ಪ್ರಕಾರ ಸಿದ್ಧರಾಗಿದ್ದು,</verse>
				<verse number="5">ನಿಮ್ಮ ಸಹೋದರರಾದ ಇಸ್ರಯೇಲರ ಒಂದೊಂದು ಗೋತ್ರ ಶಾಖೆಯ ಪರವಾಗಿ, ನಿಮ್ಮಲ್ಲಿ ಒಂದೊಂದು ಗುಂಪಿನವರು ಪವಿತ್ರಸ್ಥಾನದಲ್ಲಿ ನಿಂತು ಪಾಸ್ಕದ ಕುರಿಮರಿಯನ್ನು ವಧಿಸಲಿ.</verse>
				<verse number="6">ಮೋಶೆಯಿಂದ ಪ್ರಕಟವಾದ ಸರ್ವೇಶ್ವರನ ವಿಧಿಗನುಸಾರ ನಿಮ್ಮ ಸಹೋದರರು ಪಾಸ್ಕಭೋಜನ ಮಾಡುವಂತೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಅವರಿಗಾಗಿ ಎಲ್ಲವನ್ನೂ ಸಿದ್ಧಮಾಡಿರಿ,” ಎಂದು ಆಜ್ಞಾಪಿಸಿದನು.</verse>
				<verse number="7">ಯೋಷೀಯನು, ಹಬ್ಬಕ್ಕೆ ಬಂದ ಜನರಿಗೆ ಪಾಸ್ಕ ಬಲಿಗಾಗಿ ಆಸ್ಥಾನದ ಸೊತ್ತಿನಿಂದ ಮೂವತ್ತು ಸಾವಿರ ಆಡುಮರಿಗಳನ್ನೂ ಕುರಿಮರಿಗಳನ್ನೂ ಮೂರು ಸಾವಿರ ಹೋರಿಗಳನ್ನೂ ದಾನಮಾಡಿದನು.</verse>
				<verse number="8">ಅವನ ಪದಾಧಿಕಾರಿಗಳು ಕೂಡ ಜನರಿಗೂ ಯಾಜಕರಿಗೂ ಲೇವಿಯರಿಗೂ ಬಲಿಪಶುಗಳನ್ನು ಸಂತೋಷವಾಗಿ ದಾನಕೊಟ್ಟರು. ದೇವಾಲಯದ ಪ್ರಧಾನರಾದ ಹಿಲ್ಕೀಯ, ಜೆಕರ್ಯ, ಯೆಹೀಯೇಲ್ ಎಂಬುವರು ಯಾಜಕರಿಗೆ ಎರಡು ಸಾವಿರದ ಆರುನೂರು ಪಾಸ್ಕದ ಕುರಿಮರಿಗಳನ್ನೂ ಮುನ್ನೂರು ಹೋರಿಗಳನ್ನೂ ಕೊಟ್ಟರು.</verse>
				<verse number="9">ಲೇವಿಯರಲ್ಲಿ ಮುಖ್ಯಸ್ಥರಾದ ಕೋನನ್ಯ, ಸೆಮಾಯ, ನೆತನೇಲ್ ಎಂಬ ಅಣ್ಣತಮ್ಮಂದಿರೂ ಹಷಲ್ಯ, ಯೆಗೀಯೇಲ್, ಯೋಜಾಬಾದ್ ಎಂಬವರೂ ಲೇವಿಯರಿಗೆ ಐದು ಸಾವಿರ ಪಾಸ್ಕದ ಕುರಿಮರಿಗಳನ್ನೂ ಐನೂರು ಹೋರಿಗಳನ್ನೂ ದಾನಮಾಡಿದರು.</verse>
				<verse number="10">ಸೇವೆಯ ಸಂಬಂಧವಾದುದ್ದೆಲ್ಲವನ್ನೂ ಏರ್ಪಡಿಸಿದನಂತರ ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ ಲೇವಿಯರು ಅರಸನ ಅಪ್ಪಣೆಯಂತೆ ವರ್ಗವರ್ಗಗಳಾಗಿಯೂ ನಿಂತರು;</verse>
				<verse number="11">ಲೇವಿಯರು ಪಾಸ್ಕದ ಪಶುಗಳನ್ನು ವಧಿಸಿದರು. ಯಾಜಕರು ಇವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಪ್ರೋಕ್ಷಿಸಿದರು.</verse>
				<verse number="12">ಲೇವಿಯರು, ಚರ್ಮ ಸುಲಿದು ಹೋಮಕ್ಕಾಗಿ ತೆಗೆದಿಟ್ಟಿದ್ದನ್ನು ಪ್ರತ್ಯೇಕಿಸಿ, ಜನರಿಗೆ ಆಯಾ ಗೋತ್ರಶಾಖೆಗಳಿಗನುಸಾರ, ಕೊಟ್ಟರು. ಇವರು ಅದನ್ನು ಮೋಶೆಯ ಧರ್ಮಶಾಸ್ತ್ರವಿಧಿಯ ಮೇರೆಗೆ ಸರ್ವೇಶ್ವರನಿಗೆ ಸಮರ್ಪಿಸಬೇಕಾಯಿತು. ಹೋರಿಗಳ ವಿಷಯದಲ್ಲೂ ಅದೇ ಕ್ರಮವನ್ನು ಅನುಸರಿಸಿದರು.</verse>
				<verse number="13">ಆಮೇಲೆ ಲೇವಿಯರು ಪಾಸ್ಕದ ಮಾಂಸವನ್ನು ನಿಯಮದ ಪ್ರಕಾರ ಬೆಂಕಿಯಲ್ಲಿ ಸುಟ್ಟರು; ದೇವರಿಗೆ ಕಾಣಿಕೆಯಾಗಿ ಸಮರ್ಪಿತವಾದ ಪಶುಗಳ ಮಾಂಸವನ್ನು ಕೊಪ್ಪರಿಗೆ, ಬಾನೆ, ಹಂಡೆಗಳಲ್ಲಿ ಬೇಯಿಸಿ, ಬೇಗನೆ ತಂದು ಜನರಿಗೆ ಬಡಿಸಿದರು.</verse>
				<verse number="14">ತರುವಾಯ ತಮಗೆ ಹಾಗು ಯಾಜಕರಿಗೆ ಭೋಜನವನ್ನು ಸಿದ್ಧಮಾಡಿದರು. ಆರೋನನ ಮಕ್ಕಳಾದ ಯಾಜಕರು ರಾತ್ರಿಯವರೆಗೂ ದಹನಬಲಿಗಳನ್ನೂ ಕೊಬ್ಬನ್ನೂ ಸಮರ್ಪಿಸುತ್ತಾ ಇದ್ದುದರಿಂದ ಲೇವಿಯರು ತಮಗೆ ಹೇಗೋ ಹಾಗೆ ಆರೋನನ ಮಕ್ಕಳಾದ ಯಾಜಕರಿಗೂ ಭೋಜನವನ್ನು ಸಿದ್ಧಮಾಡಿದರು.</verse>
				<verse number="15">ಆಸಾಫ್ಯರಾದ ಗಾಯಕರು, ಅರಸನಾದ ದಾವೀದನ ಮತ್ತು ಆಸಾಫ್, ಹೇಮಾನ್ ಹಾಗು ಅರಸನ ದರ್ಶಿಯಾದ ಯೆದುತೂನ್ ಇವರ ಆಜ್ಞಾನುಸಾರ ತಮ್ಮ ಸ್ಥಳದಲ್ಲಿ ನಿಂತಿದ್ದರು; ದ್ವಾರಪಾಲಕರು ಆಯಾ ಬಾಗಿಲುಗಳನ್ನು ಕಾಯುತ್ತಿದ್ದರು. ಅವರ ಸಹೋದರರಾದ ಲೇವಿಯರು ಅವರ ಭೋಜನಕ್ಕೆ ಸಿದ್ಧಮಾಡುತ್ತಿದ್ದುದರಿಂದ ಅವರು ತಮ್ಮ ತಮ್ಮ ಸೇವೆಯನ್ನು ಬಿಡುವುದಕ್ಕೆ ಕಾರಣ ಇರಲಿಲ್ಲ.</verse>
				<verse number="16">ಈ ಪ್ರಕಾರ ಅರಸ ಯೋಷೀಯನ ಅಪ್ಪಣೆಯಂತೆ ಪಾಸ್ಕವನ್ನು ಆಚರಿಸುವುದಕ್ಕೂ ಸರ್ವೇಶ್ವರನ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವುದಕ್ಕೂ ಸರ್ವೇಶ್ವರನ ಸೇವೆಗೆ ಸಂಬಂಧವಾದುದೆಲ್ಲವೂ ಆ ದಿವಸವೇ ಸಿದ್ಧವಾಯಿತು.</verse>
				<verse number="17">ಕೂಡಿಬಂದಿದ್ದ ಇಸ್ರಯೇಲರು ಆ ಸಂದರ್ಭದಲ್ಲಿ ಪಾಸ್ಕಹಬ್ಬವನ್ನು ಹಾಗು ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಏಳು ದಿನಗಳವರೆಗೆ ಆಚರಿಸಿದರು.</verse>
				<verse number="18">ಇಂಥಾ ಪಾಸ್ಕಹಬ್ಬ ಪ್ರವಾದಿ ಸಮುವೇಲನ ದಿವಸಗಳಿಂದ ಇಸ್ರಯೇಲರಲ್ಲಿ ನಡೆದಿರಲಿಲ್ಲ. ಯೋಷೀಯನು, ಯಾಜಕರು, ಲೇವಿಯರು, ಕೂಡಿಬಂದಿದ್ದ ಇಸ್ರಯೇಲರು, ಯೆಹೂದ್ಯರು, ಹಾಗು ಜೆರುಸಲೇಮಿನವರು ಈ ಪಾಸ್ಕಹಬ್ಬವನ್ನು ಆಚರಿಸಿದಂತೆ ಇಸ್ರಯೇಲ್ ಅರಸರಲ್ಲಿ ಒಬ್ಬನೂ ಆಚರಿಸಿರಲಿಲ್ಲ.</verse>
				<verse number="19">ಈ ಪಾಸ್ಕಹಬ್ಬ ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ನಡೆಯಿತು.</verse>
				<verse number="20">ಯೋಷೀಯನು ಮಹಾದೇವಾಲಯದ ವಿಷಯದಲ್ಲಿ ಈ ಎಲ್ಲ ವ್ಯವಸ್ಥೆಯನ್ನು ಮಾಡಿದ ನಂತರ, ಈಜಿಪ್ಟಿನ ರಾಜ ನೆಕೋ ಎಂಬುವನು ಯುದ್ಧಮಾಡುವುದಕ್ಕಾಗಿ ಯೂಫ್ರೆಟಿಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಬಂದನು.</verse>
				<verse number="21">ಯೋಷೀಯನು ಅವನಿಗೆ ವಿರುದ್ಧ ಹೊರಟನು. ನೆಕೋವನು ಅವನ ಬಳಿಗೆ ದೂತರನ್ನು ಕಳುಹಿಸಿ, “ಜುದೇಯದ ಅರಸನೇ, ನನ್ನ ಗೊಡವೆ ನಿನಗೇಕೆ? ನಾನು ಈ ಸಾರಿ ಯುದ್ಧಕ್ಕೆ ಹೊರಟಿದ್ದು ನಿನಗೆ ವಿರೋಧವಾಗಿ ಅಲ್ಲ, ನನ್ನ ಶತ್ರುವಂಶಕ್ಕೆ ವಿರೋಧವಾಗಿಯೇ, ನಾನು ಮುನ್ನುಗ್ಗಬೇಕೆಂದು ದೇವರ ಅಪ್ಪಣೆ ಆಗಿದೆ. ನನ್ನೊಂದಿಗಿರುವ ದೇವರಿಗೆ ವಿರೋಧವಾಗಿ ನೀನು ಕೈಯೆತ್ತುವುದನ್ನು ಬಿಡು. ಇಲ್ಲವಾದರೆ, ಅವರು ನಿನ್ನನ್ನು ನಾಶಮಾಡುವರು,” ಎಂದು ಹೇಳಿಸಿದನು.</verse>
				<verse number="22">ಆದರೆ ಯೋಷೀಯನು ಅವನನ್ನು ಬಿಟ್ಟು ಹಿಂದಿರುಗಲಿಲ್ಲ. ದೇವೋಕ್ತಿಯಾಗಿದ್ದ ನೆಕೋವಿನ ಮಾತಿಗೆ ಕಿವಿಗೊಡದೆ, ವೇಷಹಾಕಿಕೊಂಡು ಅವನೊಡನೆ ಕಾದಾಡುವುದಕ್ಕೆ ಮೆಗಿದ್ದೋ ಬಯಲಿಗೆ ಹೋದನು.</verse>
				<verse number="23">ಅಲ್ಲಿ ಬಿಲ್ಲುಗಾರರು ಅರಸ ಯೋಷೀಯನಿಗೆ ಬಾಣವನ್ನೆಸೆದಾಗ ಅವನು ತನ್ನ ಸೇವಕರಿಗೆ, “ನನಗೆ ದೊಡ್ಡ ಗಾಯವಾಯಿತು. ನನ್ನನ್ನು ಆಚೆಗೆ ತೆಗೆದುಕೊಂಡು ಹೋಗಿ,” ಎಂದನು.</verse>
				<verse number="24">ಸೇವಕರು ಅವನನ್ನು ಯುದ್ಧ ರಥದಿಂದಿಳಿಸಿ, ಅವನ ಎರಡನೆಯ ರಥದಲ್ಲಿ ಮಲಗಿಸಿ, ಜೆರುಸಲೇಮಿಗೆ ತೆಗೆದುಕೊಂಡು ಹೋದರು. ಅಲ್ಲಿ ಅವನು ಸತ್ತನು. ಅವನ ಶವವನ್ನು ಅವನ ಪೂರ್ವಿಕರ ಸ್ಮಶಾನದಲ್ಲಿ ಸಮಾಧಿ ಮಾಡಿದರು. ಎಲ್ಲ ಯೆಹೂದ್ಯರೂ ಜೆರುಸಲೇಮಿನವರೂ ಯೋಷೀಯನ ಮರಣಕ್ಕಾಗಿ ಶೋಕಿಸಿದರು.</verse>
				<verse number="25">ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತೆಯನ್ನು ರಚಿಸಿದನು. ಎಲ್ಲ ಗಾಯಕರೂ ಗಾಯಕಿಯರೂ ಅವನನ್ನು ಇಂದಿನವರೆಗು ತಮ್ಮ ಶೋಕಗೀತೆಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತೆ ಗ್ರಂಥದಲ್ಲಿ ಲಿಖಿತವಾಗಿವೆ.</verse>
				<verse number="26">ಯೋಷೀಯನ ಉಳಿದ ಚರಿತ್ರೆ, ಸರ್ವೇಶ್ವರನ ಧರ್ಮಶಾಸ್ತ್ರ ಅನುಸಾರವಾಗಿ ಅವನು ಸಾಧಿಸಿದ ಧಾರ್ಮಿಕ ಸುಧಾರಣೆ ಹಾಗು</verse>
				<verse number="27">ಅವನ ಪೂರ್ವೋತ್ತರ ವೃತ್ತಾಂತ ಇವು, ಇಸ್ರಯೇಲರ ಮತ್ತು ಯೆಹೂದ್ಯರ ರಾಜಗ್ರಂಥದಲ್ಲಿ ದಾಖಲಾಗಿವೆ.</verse>
			</chapter>
			<chapter number="36">
				<verse number="1">ನಾಡಿನ ಜನರು ಯೋಷೀಯನ ಮಗ ಯೆಹೋವಾಹಾಜನನ್ನು ಅವನ ತಂದೆಗೆ ಬದಲಾಗಿ, ಜೆರುಸಲೇಮಿನಲ್ಲಿ ಅರಸನನ್ನಾಗಿ ಮಾಡಿದರು.</verse>
				<verse number="2">ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತಮೂರು ವರ್ಷದವನಾಗಿದ್ದನು; ಅವನು ಜೆರುಸಲೇಮಿನಲ್ಲಿ ಮೂರು ತಿಂಗಳು ಆಳಿದನು.</verse>
				<verse number="3">ಈಜಿಪ್ಟಿನ ರಾಜನು ಜೆರುಸಲೇಮಿಗೆ ಬಂದು ಅವನನ್ನು ಪಟ್ಟದಿಂದ ತೆಗೆದುಹಾಕಿ, ಯೆಹೂದ್ಯರು ತನಗೆ 3400 ಕಿಲೋಗ್ರಾಂ ಬೆಳ್ಳಿಯನ್ನೂ 34 ಕಿಲೋಗ್ರಾಂ ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.</verse>
				<verse number="4">ಈಜಿಪ್ಟಿನ ರಾಜ ನೆಕೋವನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಜುದೇಯದ ಮತ್ತು ಜೆರುಸಲೇಮಿನ ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೆಸರಿಟ್ಟನು; ಮತ್ತು ಅವನ ಸಹೋದರನಾದ ಯೆಹೋವಾಹಾಜನನ್ನು ಈಜಿಪ್ಟ್ ದೇಶಕ್ಕೆ ಕರೆದುಕೊಂಡು ಹೋದನು.</verse>
				<verse number="5">ಯೆಹೋಯಾಕೀಮನು ಅರಸನಾದಾಗ ಅವನಿಗೆ ಇಪ್ಪತ್ತೈದು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು. ಅವನು ತನ್ನ ದೇವರಾದ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧ ನಡೆದನು.</verse>
				<verse number="6">ಬಾಬಿಲೋನಿನ ರಾಜ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಬಾಬಿಲೋನಿಗೆ ಕೊಂಡೊಯ್ಯುವುದಕ್ಕಾಗಿ ಅವನಿಗೆ ಬೇಡಿಹಾಕಿದನು.</verse>
				<verse number="7">ಸರ್ವೇಶ್ವರನ ಆಲಯದ ಹಲವು ಸಾಮಾಗ್ರಿಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು.</verse>
				<verse number="8">ಯೆಹೋಯಾಕೀಮನ ಉಳಿದ ಚರಿತ್ರೆ ಅವನು ನಡಿಸಿದ ಅಸಹ್ಯಕೃತ್ಯಗಳು ಹಾಗು ಅವನಲ್ಲಿ ಕಂಡುಬಂದದ್ದೆಲ್ಲವು ಇಸ್ರಯೇಲರ ಮತ್ತು ಯೆಹೂದ್ಯರ ರಾಜಗ್ರಂಥದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗ ಯೆಹೋಯಾಕೀನನು ಅರಸನಾದನು.</verse>
				<verse number="9">ಯೆಹೋಯಾಕೀನನು ಅರಸನಾದಾಗ ಹದಿನೆಂಟು ವರ್ಷದವನಾಗಿದ್ದನು. ಅವನು ಜೆರುಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು. ಅವನು ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.</verse>
				<verse number="10">ನೆಬೂಕದ್ನೆಚ್ಚರನು ವರ್ಷಾರಂಭದಲ್ಲಿ ಅವನನ್ನೂ ದೇವಾಲಯದ ಮೌಲ್ಯವಸ್ತುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಸಹೋದರನಾದ ಚಿದ್ಕೀಯನನ್ನು ಜುದೇಯದ ಮತ್ತು ಜೆರುಸಲೇಮಿನ ಅರಸನನ್ನಾಗಿ ಮಾಡಿದನು.</verse>
				<verse number="11">ಚಿದ್ಕೀಯನು ಅರಸನಾದಾಗ ಅವನಿಗೆ ಇಪ್ಪತ್ತೊಂದು ವರ್ಷ ವಯಸ್ಸು. ಅವನು ಜೆರುಸಲೇಮಿನಲ್ಲಿ ಹನ್ನೊಂದು ವರ್ಷ ಆಳಿದನು.</verse>
				<verse number="12">ಅವನು ತನ್ನ ದೇವರಾದ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧ ನಡೆದನು; ಸರ್ವೇಶ್ವರನ ನುಡಿಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.</verse>
				<verse number="13">ಇದಲ್ಲದೆ, ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು, ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ, ಅವನಿಗೆ ವಿರುದ್ಧ ದಂಗೆ ಎದ್ದನು. ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಅಭಿಮುಖನಾಗಲೊಲ್ಲದೆ, ಹಟಹಿಡಿದು ಮನಸ್ಸನ್ನು ಕಠಿಣಮಾಡಿಕೊಂಡನು.</verse>
				<verse number="14">ಪ್ರಧಾನ ಯಾಜಕರೂ ಪ್ರಜೆಗಳೂ ಕೂಡ ಮಹಾದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯಕೃತ್ಯಗಳನ್ನು ಅನುಸರಿಸಿ, ಸರ್ವೇಶ್ವರ ತಮಗೆ ಪ್ರತಿಷ್ಠಿಸಿಕೊಂಡಿದ್ದ ಜೆರುಸಲೇಮಿನ ದೇವಾಲಯವನ್ನು ಹೊಲೆಮಾಡಿದರು.</verse>
				<verse number="15">ಅವರ ಪಿತೃಗಳ ದೇವರಾದ ಸರ್ವೇಶ್ವರ ತಮ್ಮ ಪ್ರಜೆಯನ್ನೂ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ, ತಮ್ಮ ದೂತರ ಮುಖಾಂತರ ಅವರನ್ನು ಎಚ್ಚರಿಸುತ್ತಾ ಬಂದರು.</verse>
				<verse number="16">ಆದರೂ ಅವರು ದೇವಸಂದೇಶಕರನ್ನು ಗೇಲಿಮಾಡಿದರು. ದೇವರ ಮಾತುಗಳನ್ನು ತುಚ್ಛೀಕರಿಸಿ ಅವರ ಪ್ರವಾದಿಗಳನ್ನು ಹೀಯಾಳಿಸಿದರು. ಆದ್ದರಿಂದ ದೇವಕೋಪಾಗ್ನಿ ಅವರ ಪ್ರಜೆಯ ಮೇಲೆ ಉರಿಯತೊಡಗಿತು. ಅದರ ತಾಪ ಆರಿಹೋಗಲೇ ಇಲ್ಲ.</verse>
				<verse number="17">ಸರ್ವೇಶ್ವರಸ್ವಾಮಿ ಬಾಬಿಲೋನಿಯದ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೊಪ್ಪಿಸಿದರು. ಅವನು ಅವರ ಯುವ ಯೋಧರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿದನು. ಯುವಕರನ್ನು, ಕನ್ಯೆಯರನ್ನು, ವೃದ್ಧರನ್ನು ಹಾಗು ಅತಿವೃದ್ಧರನ್ನು ಕನಿಕರಿಸದೆ ಎಲ್ಲರನ್ನು ಕೊಲ್ಲಿಸಿದನು.</verse>
				<verse number="18">ದೇವಾಲಯದ ಎಲ್ಲ ಚಿಕ್ಕ ದೊಡ್ಡ ಸಾಮಗ್ರಿಗಳನ್ನು ಮಾತ್ರವಲ್ಲದೆ,ಸರ್ವೇಶ್ವರನ ಮಂದಿರಕ್ಕೆ ಸೇರಿದ ಭಂಡಾರದ ಹಾಗು ಅರಸನ ಮತ್ತು ಅವನ ಪದಾಧಿಕಾರಿಗಳ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.</verse>
				<verse number="19">ಅವನ ಜನರು ಜೆರುಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲ ರಾಜಮಂದಿರಗಳನ್ನೂ ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿದರು; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.</verse>
				<verse number="20">ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆ ಒಯ್ದನು. ಪರ್ಷಿಯದ ಪ್ರಭುತ್ವ ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಗುಲಾಮರಾಗಿದ್ದರು.</verse>
				<verse number="21">ಈ ಪ್ರಕಾರ ಸರ್ವೇಶ್ವರ ಯೆರೆಮೀಯನ ಮುಖಾಂತರ ಹೇಳಿಸಿದ ಮಾತು ನೆರವೇರಿತು; ನಾಡು ತನ್ನ ಸಬ್ಬತ್‍ಕಾಲವನ್ನು ಅನುಭವಿಸುವುದಕ್ಕೆ ಮಾರ್ಗವಾಯಿತು. ಅದು ಎಪ್ಪತ್ತು ವರ್ಷ ಹಾಳುಬಿದ್ದು ಆ ಕಾಲಾವಧಿಯಲ್ಲಿ ವಿಶ್ರಾಂತಿಯನ್ನು ಅನುಭವಿಸುತ್ತಿತ್ತು.</verse>
				<verse number="22">ಪರ್ಷಿಯದ ಅರಸ ಸೈರಸನ ಮೊದಲನೆಯ ವರ್ಷದಲ್ಲಿ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ಕಾರ್ಯಗತ ಮಾಡಿದರು: ಆ ಪರ್ಷಿಯದ ರಾಜ ಕೋರೆಷನ ಮನಸ್ಸನ್ನು ಪ್ರೇರಿಸಿದರು; ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ ಪತ್ರಗಳಿಂದಲೂ,</verse>
				<verse number="23">\ಪರ್ಷಿಯದ ರಾಜ ಸೈರಸ್ ಎಂಬ ನನ್ನ ಮಾತಿಗೆ ಕಿವಿಗೊಡಿ; ಪರಲೋಕ ದೇವರಾದ ಸರ್ವೇಶ್ವರ ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿದ್ದಾರೆ; ತಮಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾರೆ; ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅವರು ಸ್ವಂತನಾಡಿಗೆ ಹೋಗಬಹುದು; ಅವರ ದೇವರಾದ ಸರ್ವೇಶ್ವರ ಅವರೊಂದಿಗೆ ಇರುತ್ತಾರೆ!” ಎಂದು ಪ್ರಕಟಿಸಿದನು.</verse>
			</chapter>
		</book>
		<book number="15">
			<chapter number="1">
				<verse number="1">ಸೈರಸನು ಪರ್ಷಿಯ ದೇಶದ ಅರಸ. ಆತನ ಆಳ್ವಿಕೆಯ ಮೊದಲನೆಯ ವರ್ಷದಲ್ಲೆ ಸರ್ವೇಶ್ವರಸ್ವಾಮಿ ತಾವು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸಿದರು. ಅದಕ್ಕಾಗಿಯೆ ಅರಸ ಸೈರಸನನ್ನು ಪ್ರೇರೇಪಿಸಿ ಅವನ ರಾಜ್ಯದಲ್ಲೆಲ್ಲಾ ಡಂಗುರ ಹಾಗು ಪತ್ರಗಳ ಮೂಲಕ ಹೀಗೆ ಪ್ರಕಟಿಸುವಂತೆ ಮಾಡಿದರು:</verse>
				<verse number="2">ಪರ್ಷಿಯ ರಾಜನಾದ ಸೈರಸೆಂಬ ನನ್ನ ಮಾತನ್ನು ಕೇಳಿರಿ; ಪರಲೋಕ ದೇವರಾದ ಸರ್ವೇಶ್ವರಸ್ವಾಮಿ ಭೂಲೋಕದ ಎಲ್ಲ ರಾಜ್ಯಗಳನ್ನು ನನಗೆ ಕೊಟ್ಟಿದ್ದಾರೆ; ‘ನನಗಾಗಿ ಜುದೇಯ ನಾಡಿನ ಜೆರುಸಲೇಮಿನಲ್ಲಿ ಒಂದು ಆಲಯವನ್ನು ಕಟ್ಟಿಸಬೇಕು’ ಎಂದು ಅವರು ಆಜ್ಞಾಪಿಸಿದ್ದಾರೆ.</verse>
				<verse number="3">ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತಾರೋ ಅಂಥವರು ಜುದೇಯ ನಾಡಿನ ಜೆರುಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ, ಒಂದು ದೇವಾಲಯವನ್ನು ಕಟ್ಟಲಿ; ಅವರ ಸಂಗಡ ಅವರ ದೇವರಿರಲಿ!</verse>
				<verse number="4">ಸೆರೆಯಾಳುಗಳಾಗಿ ಅಳಿದುಳಿದವರು ಯಾವ ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರಿನ ಜನರು ಜೆರುಸಲೇಮಿನ ದೇವಾಲಯಕ್ಕಾಗಿ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕುಸಾಮಗ್ರಿ, ಪ್ರಾಣಿಪಶು, ಇವುಗಳನ್ನು ಕೊಟ್ಟು ಅವರಿಗೆ ಸಹಾಯ ಮಾಡಲಿ,” ಎಂದು ಪ್ರಚುರಪಡಿಸಿದನು.</verse>
				<verse number="5">ಈ ಪ್ರಕಟನೆಯನ್ನು ಕೇಳಿ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಕ್ಕೆ ಸೇರಿದ ಮುಖ್ಯಸ್ಥರು, ಯಾಜಕರು, ಲೇವಿಯರು ಹಾಗು ದೈವಪ್ರೇರಿತರಾದ ಎಲ್ಲರು ಜೆರುಸಲೇಮಿನಲ್ಲಿ ಸರ್ವೇಶ್ವರನಿಗೆ ಪುನಃ ಆಲಯಕಟ್ಟುವುದಕ್ಕಾಗಿ ಹೊರಟರು.</verse>
				<verse number="6">ಅವರ ನೆರೆಯವರೆಲ್ಲರು ಕೊಡುಗೆಗಳನ್ನು ಕೊಟ್ಟರು; ಬೆಳ್ಳಿ ಸಾಮಾನುಗಳು, ಬಂಗಾರದ ಆಭರಣಗಳು, ಪಶುಪ್ರಾಣಿಗಳು, ಶ್ರೇಷ್ಠವಸ್ತುಗಳು, ಇತ್ಯಾದಿಗಳನ್ನು ನೀಡಿ ಸಹಕರಿಸಿದರು.</verse>
				<verse number="7">ಜೆರುಸಲೇಮಿನಿಂದ ಕೊಳ್ಳೆಹೊಡೆದು ತಂದಿದ್ದ ಸಾಮಾನುಗಳನ್ನು ನೆಬೂಕದ್ನೆಚ್ಚರನು ತನ್ನ ದೇವರ ಗುಡಿಯಲ್ಲಿ ಇಟ್ಟಿದ್ದನು.</verse>
				<verse number="8">ಪರ್ಷಿಯಾದ ರಾಜ ಸೈರಸನು, ಸರ್ವೇಶ್ವರನ ಆಲಯಕ್ಕೆ ಸೇರಿದ್ದ ಸಾಮಾನುಗಳನ್ನು ಅಲ್ಲಿಂದ ತೆಗೆಸಿ ಖಜಾಂಚಿಯಾಗಿದ್ದ ಮಿತ್ರದಾತನಿಗೆ ಒಪ್ಪಿಸಿದನು. ಮಿತ್ರದಾತನು ಅವುಗಳನ್ನು ಜುದೇಯದ ರಾಜ್ಯ ಪಾಲನಾದ ಶೆಷ್ಬಚ್ಚರನಿಗೆ ಲೆಕ್ಕ ಮಾಡಿಕೊಟ್ಟನು.</verse>
				<verse number="9">ಆ ಸಾಮಾನುಗಳ ಪಟ್ಟಿ ಹೀಗಿದೆ:- ಬಂಗಾರದ ಬೋಗುಣಿಗಳು — 30 ಬೆಳ್ಳಿಯ ಬೋಗುಣಿಗಳು — 1000 ಇತರ ಬೋಗುಣಿಗಳು — 29 ಚಿನ್ನದ ಬಟ್ಟಲುಗಳು — 30 ಕಡಿಮೆ ಮಟ್ಟದ ಬೆಳ್ಳಿಯ ಬಟ್ಟಲುಗಳು — 410 ಇತರ ಪಾತ್ರೆಗಳು — 1000</verse>
				<verse number="10"></verse>
				<verse number="11">ಬೆಳ್ಳಿಬಂಗಾರದ ನಾನಾ ಸಾಮಾನುಗಳ ಒಟ್ಟು ಸಂಖ್ಯೆ - 5400: ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬಿಲೋನಿನಿಂದ ಜೆರುಸಲೇಮಿಗೆ ಕರೆದುಕೊಂಡು ಬಂದಾಗ ಈ ಎಲ್ಲ ಸಾಮಾನುಗಳನ್ನು ತೆಗೆದುಕೊಂಡು ಬಂದನು.</verse>
			</chapter>
			<chapter number="2">
				<verse number="1">ಸೆರೆಯಿಂದ ಮರಳಿ ಬಂದ ಯೆಹೂದ್ಯ ಸಮಾಜದವರ ಅಂಕೆಸಂಖ್ಯೆ ಹೀಗಿದೆ: ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಬಾಬಿಲೋನಿನ ಸೆರೆಯಲ್ಲಿ ಬಂಧಿಸಿದ್ದವರಲ್ಲಿ ಬಿಡುಗಡೆ ಹೊಂದಿ ಹಿಂತಿರುಗಿದವರು ಇವರು:</verse>
				<verse number="2">ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಸೆರಾಯ, ರೆಗೇಲಾಯ, ಮೊರ್ದೆಕೈ, ಬಿಲ್ಷಾನ್, ಮಿಸ್ಪಾರ್, ಬಿಗ್ವೈ, ರೆಹೂಮ್, ಬಾಣ ಎಂಬ ನಾಯಕರು.</verse>
				<verse number="3">ಇವರ ಮುಂದಾಳತ್ವದಲ್ಲಿ ಈ ಕೆಳಕಂಡವರು ಹಿಂದಿರುಗಿ ಬಂದು ಜೆರುಸಲೇಮಿನಲ್ಲೂ ಜುದೇಯ ನಾಡಿನ ತಮ್ಮ ಸ್ವಂತ ಪಟ್ಟಣಗಳಲ್ಲೂ ನೆಲಸಿದರು: ಪರೋಷಿನವರು — 2172 ಶೆಫಟ್ಯನವರು — 372 ಅರಹನವರು — 775 ಪಹತ್‍ಮೋವಾಬಿನವರಾದ ಯೋಷೂವ ಮತ್ತು ಯೋವಾಬ್‍ ಸಂತಾನದವರು — 2812 ಎಲಾಮಿನವರು — 1254 ಜತ್ತೂವಿನವರು — 945 ಜಕ್ಕೈಯವರು — 750 ಬಾನೀಯವರು — 642 ಬೇಬೈಯವರು — 632 ಅಜ್ಗಾದಿನವರು — 1222 ಅದೋನೀಕಾಮಿನವರು — 666 ಬಿಗ್ವೈಯವರು — 2056 ಆದೀನನವರು — 454 ಅಟೇರಿನವರಾದ ಹಿಜ್ಕೀಯನ ಸಂತಾನದವರು — 98 ಬೇಚೈಯವರು — 323 ಯೋರನವರು — 112 ಹಾಷುಮಿನವರು — 223 ಗಿಬ್ಬಾರಿನವರು — 95 ಬೇತ್ಲೆಹೇಮಿನವರು — 123 ನೆಟೋಫ ಊರಿನವರು — 50 ಅನಾತೋತ್ ಊರಿನವರು — 128 ಅಜ್ಮಾವತಿನವರು — 42 ಕಿರ್ಯತ್ಯಾರೀಮ್ ಕೆಫೀರ ಬೇರೋತ್ ಊರುಗಳವರು — 743 ರಾಮಾ, ಗೆಬ ಊರುಗಳವರು — 621 ಮಿಕ್ಮಾಸಿನವರು — 122 ಬೇತೇಲ್ ಅಯಿ ಎಂಬ ಊರುಗಳವರು — 223 ನೆಬೋವಿನವರು — 52 ಮಗ್ಬೀಷಿನವರು — 156 ಬೇರೆ ಏಲಾಮಿನವರು — 1254 ಹಾರಿಮನವರು — 120 ಲೋದ್, ಹಾದೀದ್, ಓನೋ ಎಂಬ ಊರುಗಳವರು — 725 ಜೆರಿಕೋವಿನವರು — 345 ಸೆನಾಹನವರು — 3630 ಯಾಜಕರಲ್ಲಿ - ಯೆದಾಯನವರಾದ ಯೇಷೂವನ ಮನೆಯವರು — 973 ಇಮ್ಮೇರವರು — 1052 ಪಷ್ಹೂರನವರು — 1247 ಹಾರಿಮನವರು — 1017 ಲೇವಿಯರಲ್ಲಿ - ಹೋದ್ಯನವರಾದ ಯೇಷೂವ, ಕದ್ಮೀಯೇಲ್ ಇವನ ಸಂತಾನದವರು — 74 ಗಾಯಕರಲ್ಲಿ - ಆಸಾಫ್ಯರು — 128 ದ್ವಾರಪಾಲಕರಲ್ಲಿ - ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ, ಶೋಬೈ, ಇವರ ಸಂತಾನದವರು ಒಟ್ಟು. — 139</verse>
				<verse number="4"></verse>
				<verse number="5"></verse>
				<verse number="6"></verse>
				<verse number="7"></verse>
				<verse number="8"></verse>
				<verse number="9"></verse>
				<verse number="10"></verse>
				<verse number="11"></verse>
				<verse number="12"></verse>
				<verse number="13"></verse>
				<verse number="14"></verse>
				<verse number="15"></verse>
				<verse number="16"></verse>
				<verse number="17"></verse>
				<verse number="18"></verse>
				<verse number="19"></verse>
				<verse number="20"></verse>
				<verse number="21"></verse>
				<verse number="22"></verse>
				<verse number="23"></verse>
				<verse number="24"></verse>
				<verse number="25"></verse>
				<verse number="26"></verse>
				<verse number="27"></verse>
				<verse number="28"></verse>
				<verse number="29"></verse>
				<verse number="30"></verse>
				<verse number="31"></verse>
				<verse number="32"></verse>
				<verse number="33"></verse>
				<verse number="34"></verse>
				<verse number="35"></verse>
				<verse number="36"></verse>
				<verse number="37"></verse>
				<verse number="38"></verse>
				<verse number="39"></verse>
				<verse number="40"></verse>
				<verse number="41"></verse>
				<verse number="42"></verse>
				<verse number="43">ದೇವಸ್ಥಾನದ ಪರಿಚಾರಕರಲ್ಲಿ - ಜೀಹ, ಹಸೂಫ,</verse>
				<verse number="44">ಟಬ್ಬಾವೋತ್, ಕೇರೂಸ್, ಸೀಯಹಾ, ಪಾದೋನ್,</verse>
				<verse number="45">ರೆಚೀನ್, ನೆಕೋದ, ಗಜ್ಜಾಮ್, ಉಜ್ಜ, ಪಾಸೇಹ,</verse>
				<verse number="46"></verse>
				<verse number="47"></verse>
				<verse number="48"></verse>
				<verse number="49"></verse>
				<verse number="50">ಬೇಸೈ, ಆಸ್ನ, ಮೆಗೂನೀಮ್, ನೆಫೀಸೀಮ್,</verse>
				<verse number="51">ಬಕ್ಬೂಕ್, ಹಕ್ಕೂಫ, ಹರ್ಹೂರ್, ಬಚ್ಲೂತ್,</verse>
				<verse number="52"></verse>
				<verse number="53">ಮೆಹೀದ, ಹರ್ಷ, ಬರ್ಕೋಸ್, ಸೀಸೆರ, ತೆಮಹ,</verse>
				<verse number="54">ನೆಜೀಹ, ಹಟೀಫ, ಇವರ ಸಂತಾನದವರು.</verse>
				<verse number="55">ಸೊಲೊಮೋನನ ಸೇವಕರಲ್ಲಿ ಸೋಟೈ, ಹಸ್ಸೋಫೆರೆತ್, ಪೆರೂಧ,</verse>
				<verse number="56">ಯಾಲ, ದರ್ಕೋನ್, ಗಿದ್ದೇಲ್,</verse>
				<verse number="57">ಶೆಫಟ್ಯ, ಹಟ್ಟೀಲ್, ಪೋಕೆರೆತ್, ಹಚ್ಚೆಬಾಯೀಮ್, ಆಮೀ ಇವರ ಸಂತಾನದವರು.</verse>
				<verse number="58">ದೇವಸ್ಥಾನದ ಎಲ್ಲ ಸೇವಕರು, ಸೊಲೊಮೋನನ ಆಳುಗಳು ಒಟ್ಟು 392 ಮಂದಿ.</verse>
				<verse number="59">ತೇಲ್ಮೆಲಹ, ತೇಲ್ಹರ್ಷ, ಕೆರೂಬದ್ದಾನ್, ಇಮ್ಮೇರ್ ಎಂಬ ಊರುಗಳಿಂದ ಬಂದವರಾಗಿ ಇದ್ದು, ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ ತಾವು ಇಸ್ರಯೇಲರೆಂಬುದನ್ನು ರುಜುಪಡಿಸಲು ಆಗದವರಲ್ಲಿ</verse>
				<verse number="60">ದೆಲಾಯ, ಟೋಬೀಯ, ನೆಕೋದ ಇವರ ಸಂತಾನದವರು, 652 ಮಂದಿ.</verse>
				<verse number="61">ಯಾಜಕರಲ್ಲಿ - ಹಬಯ್ಯ, ಹಕ್ಕೋಜ್, ಬರ್ಜಿಲ್ಲೈ ಇವರ ಸಂತಾನದವರು. (ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.)</verse>
				<verse number="62">ಇವರು ತಮ್ಮ ವಂಶಾವಳಿಯ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅಶುದ್ಧರೆಂದು ಯಾಜಕರ ವೃತ್ತಿಯಿಂದ ನಿರಾಕೃತರಾದರು.</verse>
				<verse number="63">ಊರಿಮ್ ತುಮ್ಮಿಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ, ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನ ಮಾಡಬಾರದೆಂಬುದಾಗಿ ರಾಜ್ಯಪಾಲನು ತೀರ್ಪುಮಾಡಿದನು.</verse>
				<verse number="64">ಹೀಗೆ ಹಿಂದಿರುಗಿ ಬಂದು ಸಭೆಸೇರಿದ ಸರ್ವಸಮೂಹದ ಒಟ್ಟು ಸಂಖ್ಯೆ 42,360:</verse>
				<verse number="65">ಈ ಸಂಖ್ಯೆಗೆ ಒಳಪಡದ ಅವರ ದಾಸದಾಸಿಯರು 7,337 ಮಂದಿ, ಅವರಲ್ಲಿ ಗಾಯಕರೂ ಗಾಯಕಿಯರೂ 200 ಮಂದಿ ಇದ್ದರು.</verse>
				<verse number="66">ಅವರಿಗೆ 736 ಕುದುರೆಗಳೂ 245 ಹೇಸರಕತ್ತೆಗಳೂ 435 ಒಂಟೆಗಳೂ</verse>
				<verse number="67">6720 ಕತ್ತೆಗಳೂ ಇದ್ದವು.</verse>
				<verse number="68">ಗೋತ್ರಪ್ರಧಾನರಲ್ಲಿ ಕೆಲವರು ಜೆರುಸಲೇಮಿನಲ್ಲಿ ಸರ್ವೇಶ್ವರನ ಆಲಯವಿದ್ದ ಸ್ಥಳಕ್ಕೆ ಬಂದಾಗ ದೇವಾಲಯವನ್ನು ಪುನಃ ಅದೇ ಸ್ಥಳದಲ್ಲಿ ಕಟ್ಟುವುದಕ್ಕೆ ಕಾಣಿಕೆಗಳನ್ನು ಕೊಟ್ಟರು.</verse>
				<verse number="69">ಅವರು ತಮ್ಮ ಸಾಮರ್ಥ್ಯಾನುಸಾರ ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು - 400 ಕಿಲೋಗ್ರಾಂ ಬೆಳ್ಳಿ ಮತ್ತು ನೂರು ಯಾಜಕ ವಸ್ತ್ರಗಳು.</verse>
				<verse number="70">ಹೀಗೆ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದೇವಸ್ಥಾನದ ಪರಿಚಾರಕರು, ಜನಸಾಮಾನ್ಯರಲ್ಲಿ ಕೆಲವರು, ತಮತಮಗೆ ನೇಮಕವಾದ ಪಟ್ಟಣಗಳಲ್ಲಿ ವಾಸಿಸಿದರು. ಉಳಿದ ಎಲ್ಲ ಇಸ್ರಯೇಲರು ತಮ್ಮ ತಮ್ಮ ಪಟ್ಟಣಗಳಲ್ಲೇ ವಾಸಿಸಿದರು.</verse>
			</chapter>
			<chapter number="3">
				<verse number="1">ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಯೇಲರು, ಏಳನೆಯ ತಿಂಗಳಿನಲ್ಲಿ ಏಕ ಮನಸ್ಸಿನಿಂದ ಜೆರುಸಲೇಮಿಗೆ ಕೂಡಿಬಂದರು.</verse>
				<verse number="2">ದೈವಪುರುಷ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ದಹನಬಲಿಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗ ಯೇಷೊವನೂ ಯಾಜಕರಾದ ಅವನ ಬಂಧುಗಳೂ ಹಾಗು ಶೆಯಲ್ತೀಯೇಲನ ಮಗ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಯೇಲ್ ದೇವರ ಬಲಿಪೀಠವನ್ನು ಪುನಃ ಕಟ್ಟುವುದಕ್ಕೆ ಆಗ ಆರಂಭಿಸಿದರು.</verse>
				<verse number="3">ಸುತ್ತಮುತ್ತಲಿನ ಜನರಿಗೆ ಅವರು ಹೆದರಿದರು. ಈ ಕಾರಣ ಪೀಠವನ್ನು ಅದರ ಸ್ಥಳದಲ್ಲೇ ಕಟ್ಟಿ, ಅದರ ಮೇಲೆ ಸರ್ವೇಶ್ವರನಿಗೆ, ಬೆಳಿಗ್ಗೆ ಹಾಗು ಸಂಜೆ ವೇಳೆಯ ದಹನಬಲಿ ದಾನಗಳನ್ನು ಅರ್ಪಿಸಿದರು.</verse>
				<verse number="4">ಇದಲ್ಲದೆ ಶಾಸ್ತ್ರದಲ್ಲಿ ಬರೆದಿರುವಂತೆ ಅವರು ಪರ್ಣಕುಟೀರಗಳ ಜಾತ್ರೆಯನ್ನು ಆಚರಿಸಿ, ದಿನಕ್ಕೆ ಇಷ್ಟಿಷ್ಟೆಂಬ ವಿಧಿಗನುಸಾರವಾಗಿ ಪ್ರತಿದಿನವೂ ದಹನಬಲಿಗಳನ್ನರ್ಪಿಸಿದರು.</verse>
				<verse number="5">ಅಂದಿನಿಂದ ನಿತ್ಯ ದಹನಬಲಿ ಮತ್ತು ಅಮಾವಾಸ್ಯೆ ಬಲಿ, ಸರ್ವೇಶ್ವರನ ಎಲ್ಲ ಉತ್ಸವದಿನಗಳಿಗೆ ನೇಮಕವಾದ ದಹನಬಲಿ ಹಾಗು, ಜನರು ಸ್ವಂತ ಇಚ್ಛೆಯಿಂದ ತಂದುಕೊಟ್ಟ ಬಲಿದಾನಗಳು, ಇವು ಸರ್ವೇಶ್ವರನಿಗೆ ಸಮರ್ಪಣೆಯಾಗುತ್ತಾ ಬಂದವು.</verse>
				<verse number="6">ಏಳನೆಯ ತಿಂಗಳಿನ ಮೊದಲನೆಯ ದಿನದಿಂದ ಹೀಗೆ ಸರ್ವೇಶ್ವರನಿಗೆ ದಹನಬಲಿಗಳನ್ನು ಅರ್ಪಿಸತೊಡಗಿದರು. ಆಗ ಸರ್ವೇಶ್ವರನ ಆಲಯದ ಅಸ್ತಿವಾರವನ್ನು ಇನ್ನೂ ಹಾಕಿರಲಿಲ್ಲ.</verse>
				<verse number="7">ಆದರೆ ಪರ್ಷಿಯ ರಾಜನಾದ ಸೈರಸನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಜನರು ಕಲ್ಲುಕುಟಿಗನಿಗೆ ಹಾಗು ಬಡಗಿಗೆ ಹಣವನ್ನು ಕೊಟ್ಟಿದ್ದರು. ಅಂತೆಯೇ ಲೆಬನೋನಿನಿಂದ ಸಮುದ್ರ ಮಾರ್ಗವಾಗಿ, ಜೊಪ್ಪಕ್ಕೆ ದೇವದಾರು ಮರಗಳನ್ನು ತರತಕ್ಕ ಸಿದೋನ್ಯರಿಗೆ ಹಾಗು ಟೈರಿನವರಿಗೆ ಅನ್ನಪಾನಗಳನ್ನೂ ಎಣ್ಣೆಯನ್ನೂ ಕೊಟ್ಟಿದ್ದರು.</verse>
				<verse number="8">ಹೀಗೆ ಜನರು ಜೆರುಸಲೇಮಿನ ದೇವಾಲಯಕ್ಕೆ ಬಂದ ಎರಡನೆಯ ವರ್ಷದ ಎರಡನೆಯ ತಿಂಗಳಲ್ಲಿ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲ್, ಯೋಚಾದಾಕನ ಮಗ ಯೇಷೂವ, ಇವರೂ ಇವರ ಸಹೋದರರಾದ ಇತರ ಯಾಜಕರು, ಲೇವಿಯರು, ಸೆರೆಯಿಂದ ಜೆರುಸಲೇಮಿಗೆ ಮರಳಿಬಂದ ಬೇರೆ ಎಲ್ಲರು ದೇವಾಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದರು. ಇಪ್ಪತ್ತು ಮತ್ತು ಅದಕ್ಕೆ ಮೇಲ್ಪಟ್ಟ ವಯಸ್ಸುಳ್ಳ ಲೇವಿಯರನ್ನು ಸರ್ವೇಶ್ವರನ ಆಲಯವನ್ನು ಕಟ್ಟುವವರ ಮೇಲ್ವಿಚಾರಣೆಗೆ ನೇಮಿಸಲಾಯಿತು.</verse>
				<verse number="9">ಕೂಡಲೆ ಲೇವಿಯರಲ್ಲಿ ಹೋದವ್ಯನ ಸಂತಾನದವರಾದ ಯೇಷೂವನು, ಅವನ ಮಕ್ಕಳು, ಸಹೋದರರು, ಕದ್ಮೀಯೇಲನು, ಅವನ ಮಕ್ಕಳು, ಹೇನಾದಾದನ ಮಕ್ಕಳು, ಅವರ ಮಕ್ಕಳು, ಬಂಧುಗಳು, ಇವರು ಎಲ್ಲರು ಕೂಡಿಬಂದು ದೇವಾಲಯ ಕಟ್ಟುವವರ ಮೇಲ್ವಿಚಾರಕರಾಗಿ ನಿಂತರು.</verse>
				<verse number="10">ಕಟ್ಟುವವರು ಸರ್ವೇಶ್ವರನ ಮಂದಿರದ ಅಸ್ತಿವಾರವನ್ನು ಹಾಕಿದಾಗ, ಇಸ್ರಯೇಲರ ಅರಸ ದಾವೀದನು ನೇಮಿಸಿದ ಕ್ರಮಕ್ಕನುಸಾರ, ಸರ್ವೇಶ್ವರನನ್ನು ಸಂಕೀರ್ತಿಸಿದರು. ಇದಕ್ಕಾಗಿ ದೀಕ್ಷಾವಸ್ತ್ರ ಭೂಷಿತರಾದ ಯಾಜಕರು ತುತೂರಿಗಳೊಡನೆ ಹಾಗು ಆಸಾಫನ ಮಕ್ಕಳಾದ ಲೇವಿಯರು ತಾಳಗಳೊಡನೆ ನಿಂತುಕೊಂಡು,</verse>
				<verse number="11">ಪರಸ್ಪರವಾಗಿ ಹಾಡುತ್ತಾ ಸರ್ವೇಶ್ವರನನ್ನು ಕೀರ್ತಿಸಿದರು. “ಸರ್ವೇಶ್ವರ ಒಳ್ಳೆಯವರು! ಅವರ ಅಚಲಪ್ರೀತಿ ಇಸ್ರಯೇಲರ ಮೇಲೆ ಶಾಶ್ವತ!” ಎಂದು ಕೃತಜ್ಞತಾಸ್ತುತಿ ಮಾಡಿದರು. ಈ ಸ್ತುತಿ ಕೀರ್ತನೆ ಕೇಳಿಸಿದ ಕೂಡಲೆ ಸರ್ವೇಶ್ವರನ ಆಲಯಕ್ಕೆ ಅಸ್ತಿವಾರ ಹಾಕಲಾಯಿತೆಂದು ಜನರೆಲ್ಲರು ಉತ್ಸಾಹಧ್ವನಿಯಿಂದ ಆರ್ಭಟಿಸಿದರು.</verse>
				<verse number="12">ಯಾಜಕರಲ್ಲೂ ಲೇವಿಯರಲ್ಲೂ ಗೋತ್ರಪ್ರಧಾನರಲ್ಲೂ ಅನೇಕರು ಅಂದರೆ, ಹಿಂದಿನ ದೇವಾಲಯವನ್ನು ನೋಡಿದ್ದ ಮುದುಕರು, ತಮ್ಮ ಕಣ್ಣು ಮುಂದೆ ದೇವಾಲಯದ ಅಸ್ತಿವಾರ ಹಾಕಲಾದುದನ್ನು ನೋಡಿದಾಗ, ಬಹಳವಾಗಿ ಅತ್ತರು; ಬೇರೆ ಹಲವರು ಹರ್ಷಧ್ವನಿಯಿಂದ ಆರ್ಭಟಿಸಿದರು.</verse>
				<verse number="13">ಜನರು ಹೀಗೆ ಮಹಾಧ್ವನಿಯಿಂದ ಆರ್ಭಟಿಸುತ್ತಾ ಇದ್ದುದರಿಂದ ಹರ್ಷಧ್ವನಿ ಯಾವುದು ಅಳುವವರ ಧ್ವನಿ ಯಾವುದು ಎಂದು ಹೇಳಲಾಗಲಿಲ್ಲ. ಗದ್ದಲವು ಬಹುದೂರದವರೆಗೂ ಕೇಳಿಸುತ್ತಿತ್ತು.</verse>
			</chapter>
			<chapter number="4">
				<verse number="1">ಸೆರೆಯಿಂದ ಮರಳಿ ಬಂದವರು ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಮಂದಿರವನ್ನು ಕಟ್ಟುತ್ತಿದ್ದಾರೆಂಬ ಸಮಾಚಾರ ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ವಿರೋಧಿಗಳಿಗೆ ಮುಟ್ಟಿತು.</verse>
				<verse number="2">ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು, “ನಿಮ್ಮೊಡನೆ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ; ಏಕೆಂದರೆ ನಿಮ್ಮಂತೆ ನಾವೂ ನಿಮ್ಮ ದೇವರ ಭಕ್ತರು; ನಮ್ಮನ್ನು ಇಲ್ಲಿ ತಂದಿರಿಸಿದ ಅಸ್ಸೀರಿಯದ ಅರಸ ಏಸರ್ಹದ್ದೋನನ ಕಾಲದಿಂದ ನಾವು ಆ ದೇವರಿಗೇ ಬಲಿಯರ್ಪಣೆ ಮಾಡುತ್ತಾ ಬಂದಿದ್ದೇವೆ,” ಎಂದು ಹೇಳಿದರು.</verse>
				<verse number="3">ಆಗ ಜೆರುಬ್ಬಾಬೆಲ್, ಯೇಷೂವ ಹಾಗು ಬೇರೆ ಇಸ್ರಯೇಲ್ ಗೋತ್ರಪ್ರಧಾನರು ಅವರಿಗೆ, “ನಮ್ಮ ದೇವರ ಆಲಯವನ್ನು ಕಟ್ಟುವುದರಲ್ಲಿ ನೀವು ನಮ್ಮೊಡನೆ ಸೇರಲೇಕೂಡದು; ಪರ್ಷಿಯರಾಜ ಸೈರಸನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಯೇಲ್ ದೇವರಾದ ಸರ್ವೇಶ್ವರನ ಆಲಯವನ್ನು ಕಟ್ಟಬೇಕು,” ಎಂದು ಉತ್ತರಕೊಟ್ಟರು.</verse>
				<verse number="4">ಆಗ ಆ ದೇಶನಿವಾಸಿಗಳು ಯೆಹೂದ್ಯರನ್ನು ನಿರಾಶೆಗೊಳಿಸಿ ಅದನ್ನು ಕಟ್ಟದ ಹಾಗೆ ಬೆದರಿಸಿದರು.</verse>
				<verse number="5">ಅವರ ಉದ್ದೇಶವನ್ನು ತಡೆಗಟ್ಟಲು ಹಣಕೊಟ್ಟು ವಕೀಲರನ್ನು ಇಟ್ಟರು. ಈ ಪ್ರಕರಣ ಪರ್ಷಿಯರಾಜ ಸೈರಸನ ಕಾಲದಿಂದ ಪರ್ಷಿಯರಾಜ ದಾರ್ಯಾವೆಷನ ಆಳ್ವಿಕೆಯವರೆಗೂ ನಡೆಯಿತು.</verse>
				<verse number="6">ಇದಲ್ಲದೆ, ಅಹಷ್ಟೇರೋಷನ ಆಳ್ವಿಕೆಯ ಆರಂಭದಲ್ಲಿ ಅವರು ಜುದೇಯ ಹಾಗು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದವರಿಗೆ ವಿರುದ್ಧ ಆಪಾದನ ಪತ್ರವನ್ನು ಬರೆದರು.</verse>
				<verse number="7">ಪರ್ಷಿಯರಾಜ ಅರ್ತಷಸ್ತನ ಕಾಲದಲ್ಲಿ ಬಿಷ್ಲಾಮ್, ಮಿತ್ರದಾತ, ಟಾಬೆಯೇಲ್, ಈ ಮೊದಲಾದವರು ಅರ್ತಷಸ್ತನಿಗೆ ಪತ್ರ ಬರೆದರು. ಆ ಪತ್ರ ಅರಮಾಯಿಕ್ ಲಿಪಿಯಲ್ಲೂ ಅರಮಾಯಿಕ್ ಭಾಷೆಯಲ್ಲೂ ಇತ್ತು.</verse>
				<verse number="8">ರಾಜ್ಯಪಾಲ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಜೆರುಸಲೇಮಿಗೆ ವಿರೋಧವಾಗಿ ಈ ಕೆಳಗೆ ಕಂಡಂತೆ ಕಾಗದವನ್ನು ಬರೆದು ಅರ್ತಷಸ್ತನಿಗೆ ಕಳುಹಿಸಿದ್ದರು.</verse>
				<verse number="9">“ರಾಜ್ಯಪಾಲ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಅವರು, ಅವರ ಜೊತೆಗಾರರಾದ ದಿನಾಯರು, ಅಪರ್ಸತ್ಕಾಯರು, ಟರ್ಪಲಾಯರು, ಅಪಾರ್ಸಾಯರು, ಯೆರೆಕ್ಯರು, ಬಾಬಿಲೋನಿನವರು, ಶೊಷನಿನವರು.</verse>
				<verse number="10">ದೆಹಾಯರು, ಏಲಾಮ್ಯರು ಹಾಗು ಮಹಾ ಶ್ರೀಮತ್ ಆಸೆನಪ್ಪರನು ಕರೆದುತಂದು ಸಮಾರಿಯ ಪಟ್ಟಣದಲ್ಲಿ ಮತ್ತು ನದಿಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು, ಬರೆಯುವುದು ಏನೆಂದರೆ:</verse>
				<verse number="11">ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಈ ರೀತಿಯಾಗಿತ್ತು: ಅರ್ತಷಸ್ತರಾಜರಿಗೆ, ತಮ್ಮ ಸೇವಕರಾದ ನದಿಯ ಈಚೆಯವರು:</verse>
				<verse number="12">ಅದಾಗಿ, ತಮ್ಮ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಜೆರುಸಲೇಮನ್ನು ಸೇರಿ ರಾಜ ಕಂಟಕವಾದ ಆ ದುಷ್ಟಪಟ್ಟಣವನ್ನೂ ಅದರ ಪೌಳಿಗೋಡೆಯನ್ನೂ ಮತ್ತೆ ಕಟ್ಟುವುದಕ್ಕೆ ಪ್ರಾರಂಭಿಸಿ, ಪೌಳಿಗೋಡೆಯ ಅಸ್ತಿವಾರವನ್ನು ಮುಗಿಸಿದ್ದಾರೆ ಎಂಬುದಾಗಿ ನಾವು ರಾಜರಿಗೆ ಅರಿಕೆಮಾಡಿಕೊಳ್ಳುತ್ತೇವೆ.</verse>
				<verse number="13">ಆ ಪಟ್ಟಣವನ್ನೂ ಅದರ ಪೌಳಿಗೋಡೆಗಳನ್ನೂ ಕಟ್ಟುವುದು ಮುಗಿಸಿದರೆ ಅವರು ಕಪ್ಪ, ತೆರಿಗೆ, ಸುಂಕಗಳನ್ನು ಕೊಡುವುದಿಲ್ಲ; ಕಡೆಯಲ್ಲಿ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.</verse>
				<verse number="14">ನಾವಾದರೋ ಅರಮನೆಯ ಉಪ್ಪನ್ನು ತಿನ್ನುವವರು; ಅರಸರಿಗೆ ಅಪಮಾನವಾಗುವುದನ್ನು ನೋಡಿ ಸುಮ್ಮನೆ ಇರುವುದು ಉಚಿತವಲ್ಲವೆಂದು ತಿಳಿದು ತಮಗೆ ಈ ಪತ್ರದ ಮೂಲಕ ಸುದ್ದಿ ಕಳುಹಿಸಿದ್ದೇವೆ.</verse>
				<verse number="15">ಈ ವಿಷಯವಾಗಿ ತಾವು ತಮ್ಮ ತಂದೆತಾತಂದಿರ ಚರಿತ್ರಗ್ರಂಥದಲ್ಲಿ ಪರಿಶೋಧಿಸಬೇಕೆಂಬುದು ನಮ್ಮ ಅಭಿಪ್ರಾಯ. ಆ ಪಟ್ಟಣ ರಾಜಕಂಟಕವಾದ ಪಟ್ಟಣ. ಅರಸರಿಗೂ ಸಂಸ್ಥಾನಗಳಿಗೂ ತೊಂದರೆ ಹುಟ್ಟಿಸುವಂಥ ಪಟ್ಟಣ. ಇದು ಪೂರ್ವಕಾಲದಿಂದಲೂ ದಂಗೆಯೆಬ್ಬಿಸುತ್ತಾ ಬಂದಿದೆ ಎಂದೂ ಹಾಗು ಆ ಕಾರಣದಿಂದಲೇ ನೆಲಸಮವಾಯಿತೆಂದೂ ಆ ಚರಿತ್ರಗ್ರಂಥದಲ್ಲಿ ಕಂಡುಬರುತ್ತದೆ.</verse>
				<verse number="16">ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ ತಮಗೆ ನದಿಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸರಿಗೆ ಅರಿಕೆ ಮಾಡಿಕೊಳ್ಳುತ್ತೇವೆ.”</verse>
				<verse number="17">ಈ ಪತ್ರಕ್ಕೆ ಅರಸ ಅವರಿಗೆ ಕೊಟ್ಟ ಉತ್ತರ: “ರಾಜ್ಯಪಾಲ ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಅವರಿಗೂ ಸಮಾರಿಯದಲ್ಲಿರುವ ಅವರ ಜೊತೆಗಾರರಿಗೂ ನದಿಯ ಆಚೆಯಲ್ಲಿರುವ ಇತರರಿಗೂ ಕ್ಷೇಮಾಭಿಲಾಶೆಗಳು;</verse>
				<verse number="18">ನೀವು ಕಳುಹಿಸಿದ್ದ ಪತ್ರವನ್ನು ನನ್ನ ಸನ್ನಿಧಿಯಲ್ಲಿ ಸ್ಪಷ್ಟವಾಗಿ ಓದಲಾಯಿತು.</verse>
				<verse number="19">ನನ್ನ ಆಜ್ಞಾನುಸಾರ ವಿಚಾರಣೆಯಾದಾಗ, ಆ ಪಟ್ಟಣದವರು ಪೂರ್ವಕಾಲದಿಂದಲೇ ಅರಸರಿಗೆ ವಿರೋಧವಾಗಿ ಪ್ರತಿಭಟಿಸುತ್ತಾ, ದ್ರೋಹಮಾಡುತ್ತಾ,</verse>
				<verse number="20">ದಂಗೆಯೆಬ್ಬಿಸುತ್ತಾ ಬಂದಿದ್ದಾರೆ; ಇದಲ್ಲದೆ ಜೆರುಸಲೇಮಿನಲ್ಲಿ ಬಲಿಷ್ಠ ರಾಜರು ಆಳುತ್ತಾ, ನದಿಯಾಚೆಯ ಎಲ್ಲ ಪ್ರದೇಶಗಳಲ್ಲಿ ಅಧಿಕಾರ ನಡೆಸುತ್ತಾ, ಕಪ್ಪ, ತೆರಿಗೆ, ಸುಂಕಗಳನ್ನು ತೆಗೆದುಕೊಳ್ಳುತ್ತಿದ್ದರೆಂದು ಕಂಡುಬಂದಿದೆ.</verse>
				<verse number="21">ಆದುದರಿಂದ ಆ ಜನರನ್ನು ತಡೆಯಬೇಕೆಂತಲೂ, ನನ್ನ ಅಪ್ಪಣೆಯಾಗುವವರೆಗೆ ಆ ಪಟ್ಟಣವನ್ನು ಕಟ್ಟಿ ಬಿಡಬಾರದೆಂತಲೂ ಪ್ರಕಟಿಸಿರಿ.</verse>
				<verse number="22">ರಾಜರಿಗೆ ಹಾನಿಯುಂಟಾಗದ ಹಾಗೆ ಜಾಗರೂಕತೆಯಿಂದ ಇರಿ, ಉದಾಸೀನರಾಗಿರಬೇಡಿ.”</verse>
				<verse number="23">ಅರಸ ಅರ್ತಷಸ್ತನ ಈ ಪತ್ರವನ್ನು ರೆಹೂಮ್ ಹಾಗು ಕಾರ್ಯದರ್ಶಿ ಶಿಂಷೈ ಇವರ ಮುಂದೆ ಮತ್ತು ಇವರ ಜೊತೆಗಾರರ ಮುಂದೆ ಓದಲಾಯಿತು. ಕೂಡಲೆ ಅವರು ಜೆರುಸಲೇಮಿಗೆ ಶೀಘ್ರವಾಗಿ ಹೋಗಿ, ಬಲಾತ್ಕಾರದಿಂದ ಹಾಗು ಅಧಿಕಾರದಿಂದ ಯೆಹೂದ್ಯರನ್ನು ತಡೆದರು.</verse>
				<verse number="24">ಅಂದಿನಿಂದ ಪರ್ಷಿಯರಾಜ ದಾರ್ಯಾವೆಷನ ಆಳ್ವಿಕೆಯ ಎರಡನೆಯ ವರ್ಷದವರೆಗೂ ಜೆರುಸಲೇಮಿನ ದೇವಾಲಯವನ್ನು ಕಟ್ಟುವ ಕೆಲಸ ನಿಂತುಹೋಯಿತು.</verse>
			</chapter>
			<chapter number="5">
				<verse number="1">ಆಗ ಪ್ರವಾದಿಗಳಾದ ಹಗ್ಗಾಯ ಮತ್ತು ಇದ್ದೋವಿನ ಮಗ ಜೆಕರ್ಯ ಎಂಬವರು ಇಸ್ರಯೇಲ್ ದೇವರಿಂದ ಪ್ರೇರಿತರಾಗಿ, ಅವರ ಹೆಸರಿನಲ್ಲಿ ಜುದೇಯದ ಮತ್ತು ಜೆರುಸಲೇಮಿನ ಯೆಹೂದ್ಯರನ್ನು ಪ್ರಬೋಧಿಸಿದರು.</verse>
				<verse number="2">ಅದನ್ನು ಕೇಳಿದ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲ್ ಯೋಚಾದಾಕನ ಮಗ ಯೇಷೂವ ಇವರು ಜೆರುಸಲೇಮಿನ ದೇವಾಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದರು. ದೇವಪ್ರವಾದಿಗಳು ಅವರೊಡನೆ ಇದ್ದು ಅವರಿಗೆ ಸಹಾಯಮಾಡುತ್ತ ಇದ್ದರು.</verse>
				<verse number="3">ಅದೇ ಸಮಯಕ್ಕೆ, ನದಿಯ ಈಚೆಯ ಪ್ರದೇಶಗಳ ಅಧಿಪತಿಯಾಗಿದ್ದ ತತ್ತನೈಯು ಹಾಗು ಶತರ್ಬೋಜೆನೈಯು ಮತ್ತು ಇವರ ಜೊತೆಗಾರರು ಅವರ ಬಳಿಗೆ ಬಂದು, “ಈ ಅಸ್ತಿವಾರವನ್ನು ಸರಿಪಡಿಸಿ ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆಕೊಟ್ಟವರು ಯಾರು?” ಎಂದು ಕೇಳಿದರು.</verse>
				<verse number="4">ಅಲ್ಲದೆ, ಕಟ್ಟಡವನ್ನು ಕಟ್ಟಿಸುವವರ ಹೆಸರುಗಳಾವುದೆಂದು ವಿಚಾರಿಸಿದರು.</verse>
				<verse number="5">ಆದರೆ ದೇವರ ಕೃಪಾಹಸ್ತವು ಯೆಹೂದ್ಯರ ಹಿರಿಯರ ಮೇಲೆ ಇತ್ತು. ಆದುದರಿಂದ ವಿಚಾರಿಸುವುದಕ್ಕೆ ಬಂದವರು, ಅವರಿಗೆ ಅಡ್ಡಮಾಡದೆ, “ತಾವು ಇದರ ವಿಷಯವಾಗಿ ದಾರ್ಯಾವೆಷನಿಗೆ ಸಮಾಚಾರ ಮುಟ್ಟಿಸಿ ಅನಂತರ ಉತ್ತರವನ್ನು ಬರೆದು ಕಳುಹಿಸುತ್ತೇವೆ,” ಎಂದು ಹೇಳಿ ಹೊರಟುಹೋದರು.</verse>
				<verse number="6">ನದಿಯ ಈಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈಯ ಮತ್ತು ಶೆತರ್ಬೋಜೆನೈಯ ಹಾಗು ನದಿಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರು ಅರಸ ದಾರ್ಯಾವೆಷನಿಗೆ ಪತ್ರ ಕಳುಹಿಸಿದರು.</verse>
				<verse number="7">ಅವರು ಅರಸನಿಗೆ ಕಳುಹಿಸಿದ ಪತ್ರದ ಪ್ರತಿ ಹೀಗಿದೆ:</verse>
				<verse number="8">“ದಾರ್ಯಾವೆಷ ರಾಜರಿಗೆ ಸರ್ವಥಾ ಕ್ಷೇಮ! ನಾವು ಜುದೇಯ ನಾಡಿಗೆ ಹೋಗಿ ಮಹೋನ್ನತ ದೇವರ ಆಲಯವನ್ನು ನೋಡಿದೆವು. ಇದನ್ನು ರಾಜರಿಗೆ ಈ ಮೂಲಕ ಅರಿಕೆಮಾಡುತ್ತಿದ್ದೇವೆ: ಆ ಆಲಯವನ್ನು ದೊಡ್ಡ ಕಲ್ಲುಗಳಿಂದ ಕಟ್ಟುತ್ತಿದ್ದಾರೆ. ಗೋಡೆಗಳ ಮೇಲೆ ತೊಲೆಗಳನ್ನಿಡುತ್ತಿದ್ದಾರೆ. ಈ ಕೆಲಸ ಜಾಗರೂಕತೆಯಿಂದ ಮುಂದುವರೆದಿದೆ; ಅವರ ಶ್ರಮೆಯಿಂದ ವೇಗವಾಗಿ ಬೆಳೆಯುತ್ತಿದೆ.</verse>
				<verse number="9">ಅಲ್ಲಿನ ಹಿರಿಯರನ್ನು, ‘ಈ ಅಸ್ತಿವಾರವನ್ನು ಹಾಕಿ ಈ ಆಲಯವನ್ನು ಕಟ್ಟುವುದಕ್ಕೆ ನಿಮಗೆ ಅಪ್ಪಣೆ ಕೊಟ್ಟವರು ಯಾರು?’ ಎಂದು ವಿಚಾರ ಮಾಡಿದೆವು.</verse>
				<verse number="10">ಮತ್ತು ಅವರಲ್ಲಿ ಮುಖ್ಯಸ್ಥರು ಇಂಥಿಂಥವರೆಂದು ತಮಗೆ ಬರೆದು ತಿಳಿಸುವುದಕ್ಕಾಗಿ ಅವರ ಹೆಸರುಗಳನ್ನು ಕೇಳಿದೆವು.</verse>
				<verse number="11">ಅವರು ನಮಗೆ, ನಾವು ಪರಲೋಕ ಭೂಲೋಕಗಳ ದೇವರ ದಾಸರು. ಅನೇಕಾನೇಕ ವರ್ಷಗಳ ಹಿಂದೆ ಕಟ್ಟಿದ್ದ ಆಲಯವನ್ನು ತಿರುಗಿ ಕಟ್ಟುತ್ತಿದ್ದೇವೆ. ಇಸ್ರಯೇಲರ ಒಬ್ಬ ಮಹಾರಾಜನು ಇದನ್ನು ಕಟ್ಟಿಮುಗಿಸಿದ್ದನು.</verse>
				<verse number="12">ಆದರೆ ನಮ್ಮ ಪೂರ್ವಿಕರು ಪರಲೋಕ ದೇವರನ್ನು ರೇಗಿಸಿದ್ದರಿಂದ ಆ ದೇವರು ಅವರನ್ನು ಬಾಬಿಲೋನಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟರು. ಅವನು ಈ ಆಲಯವನ್ನು ಹಾಳುಮಾಡಿ, ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ದನು.</verse>
				<verse number="13">ಆದರೆ ಬಾಬಿಲೋನಿನ ಅರಸ ಸೈರಸನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲೆ ಈ ದೇವಾಲಯವನ್ನು ಕಟ್ಟುವುದಕ್ಕೆ ಅಪ್ಪಣೆಕೊಟ್ಟನು.</verse>
				<verse number="14">ಅದು ಮಾತ್ರವಲ್ಲ, ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ತೆಗೆದುಕೊಂಡು ಹೋಗಿ ಬಾಬಿಲೋನಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗೆಯಿಸಿ, ತಾನು ರಾಜ್ಯಪಾಲನೆಗಾಗಿ ನೇಮಿಸಿದ್ದ ಶೆಷ್ಬಚ್ಚರನೆಂಬವನ ವಶಕ್ಕೆ ಕೊಟ್ಟನು.</verse>
				<verse number="15">ಅವನಿಗೆ, ‘ಈ ಸಾಮಗ್ರಿಗಳನ್ನು ಜೆರುಸಲೇಮಿನ ದೇವಾಲಯದಲ್ಲಿಡುವುದಕ್ಕಾಗಿ ತೆಗೆದುಕೊಂಡು ಹೋಗಿ ಆ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟಿಸು,’ ಎಂದು ಆಜ್ಞಾಪಿಸಿದನು.</verse>
				<verse number="16">ಆಗ ಆ ಶೆಷ್ಬಚ್ಚರನು ಬಂದು ಜೆರುಸಲೇಮಿನ ದೇವಾಲಯದ ಅಸ್ತಿವಾರವನ್ನು ಹಾಕಿದನು. ಅಂದಿನಿಂದ ಇಂದಿನವರೆಗೂ ಕಟ್ಟುವ ಕೆಲಸ ನಡೆಯುತ್ತಾ ಇದೆ. ಇನ್ನೂ ಮುಗಿಯಲಿಲ್ಲ.</verse>
				<verse number="17">“ಅರಸರಿಗೆ ಸರಿತೋರುವುದಾದರೆ, ಜೆರುಸಲೇಮಿನ ಈ ದೇವಾಲಯವನ್ನು ಮರಳಿ ಕಟ್ಟುವುದಕ್ಕೆ ಅರಸ ಸೈರಸನ ಅಪ್ಪಣೆ ದೊರಕಿದ್ದು ಸತ್ಯವೋ ಎಂಬುದರ ಬಗ್ಗೆ ಬಾಬಿಲೋನಿನ ರಾಜಭಂಡಾರದಲ್ಲಿ ಹುಡುಕಿನೋಡಬೇಕು. ಈ ಸಂಗತಿಯನ್ನು ಕುರಿತು ರಾಜರ ಚಿತ್ತವೇನೆಂಬುದು ನಮಗೆ ತಿಳಿಸೋಣವಾಗಲಿ,” ಎಂಬುದಾಗಿ ಉತ್ತರಕೊಟ್ಟರು.</verse>
			</chapter>
			<chapter number="6">
				<verse number="1">ಅರಸ ದಾರ್ಯಾವೆಷನ ಆಜ್ಞಾನುಸಾರ ಬಾಬಿಲೋನಿನ ಭಂಡಾರದಲ್ಲಿದ್ದ ಗ್ರಂಥ ಸಂಗ್ರಹದಲ್ಲಿ ಹುಡುಕಿನೋಡಿದಾಗ</verse>
				<verse number="2">ಮೇದ್ಯ ಸಂಸ್ಥಾನದಲ್ಲಿರುವ ಅಹ್ಮೆತಾ ರಾಜಧಾನಿಯಲ್ಲಿ ಒಂದು ಸುರುಳಿ ಸಿಕ್ಕಿತು. ಅದರಲ್ಲಿ ಹೀಗೆ ಬರೆಯಲಾಗಿತ್ತು:</verse>
				<verse number="3">“ಅರಸ ಸೈರಸನ ಮೊದಲನೆಯ ವರ್ಷದಲ್ಲಿ, ಅರಸ ಸೈರಸನು ಜೆರುಸಲೇಮಿನ ದೇವಾಲಯದ ಬಗ್ಗೆ ಕೊಟ್ಟ ಅಪ್ಪಣೆ ಇದು: ಬಲವಾದ ಅಸ್ತಿವಾರವನ್ನು ಹಾಕಿ, ಬಲಿಸಮರ್ಪಣೆಗಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಎತ್ತರ ಇಪ್ಪತ್ತೇಳು ಮೀಟರ್, ಅಗಲ ಇಪ್ಪತ್ತೇಳು ಮೀಟರ್ ಇರಬೇಕು.</verse>
				<verse number="4">ದೊಡ್ಡ ಕಲ್ಲುಗಳ ಮೂರು ವರಸೆಗಳಾದ ಮೇಲೆ, ಹೊಸ ಮರದ ಒಂದು ವರಸೆಯನ್ನು ಹಾಕಿ ಕಟ್ಟಬೇಕು. ಇದರ ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲಾಗುವುದು.</verse>
				<verse number="5">ಇದಲ್ಲದೆ, ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ಬಾಬಿಲೋನಿಗೆ ತೆಗೆದುಕೊಂಡು ಬಂದ ಬೆಳ್ಳಿಬಂಗಾರದ ದೇವಸ್ಥಾನದ ಪಾತ್ರೆಗಳನ್ನು ಹಿಂದಕ್ಕೆ ಕೊಡಬೇಕು. ಅವುಗಳನ್ನೆಲ್ಲ ಮೊದಲಿದ್ದ ಸ್ಥಳಕ್ಕೆ ಅಂದರೆ, ಜೆರುಸಲೇಮಿನ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಡಬೇಕು.”</verse>
				<verse number="6">ಬಳಿಕ ದಾರ್ಯಾವೆಷನು ಬರೆದು ಕಳುಹಿಸಿದ್ದೇನೆಂದರೆ, “ನದಿಯಾಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈ, ಶೆತರ್ಬೋಜೆನೈಗೆ ಹಾಗು ನದಿಯಾಚೆಯಲ್ಲಿ ಇವರ ಜೊತೆಗಾರರಾದ ಅಪರ್ಸತ್ಯಾಯರು ಇವರಿಗೆ: ನೀವು ಆ ಜನರ ಗೊಡವೆಗೆ ಹೋಗಬೇಡಿ.</verse>
				<verse number="7">ಆ ದೇವಾಲಯವನ್ನು ಕಟ್ಟುವ ಕೆಲಸಕ್ಕೆ ಅಡ್ಡಿಮಾಡಬೇಡಿ; ಜುದೇಯದ ರಾಜ್ಯಪಾಲ ಮತ್ತು ಯೆಹೂದ್ಯರ ಹಿರಿಯರೇ ಅದನ್ನು ಅದರ ಸ್ಥಳದಲ್ಲಿ ಕಟ್ಟಲಿ.</verse>
				<verse number="8">ಆ ದೇವಾಲಯವನ್ನು ಕಟ್ಟುವುದಕ್ಕಾಗಿ ನೀವು ಯೆಹೂದ್ಯರ ಹಿರಿಯರಿಗೆ ರಾಜರ ಸೊತ್ತಿನಿಂದ ಅಂದರೆ, ನದಿಯಾಚೆಯ ಪ್ರಾಂತ್ಯಗಳ ತೆರಿಗೆಯಿಂದ ತಡಮಾಡದೆ ಎಲ್ಲ ವೆಚ್ಚವನ್ನು ಕೊಡಬೇಕು.</verse>
				<verse number="9">ಪರಲೋಕ ದೇವರಿಗೆ ದಹನಬಲಿಗಳನ್ನು ಸಮರ್ಪಿಸಲು ಬೇಕಾದ ಹೋರಿ, ಟಗರು, ಕುರಿಗಳನ್ನೂ ಗೋದಿ, ಉಪ್ಪು, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ ಜೆರುಸಲೇಮಿನ ಯಾಜಕರು ಹೇಳುವ ಪ್ರಕಾರ ಪ್ರತಿದಿನ ತಪ್ಪದೆ ಒದಗಿಸಿಕೊಡಬೇಕೆಂದು ಆಜ್ಞಾಪಿಸುತ್ತೇನೆ.</verse>
				<verse number="10">ಅವರಾದರೋ ಪರಲೋಕ ದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥನೆ ಮಾಡಲಿ.</verse>
				<verse number="11">ಈ ನನ್ನ ಆಜ್ಞೆಯನ್ನು ಯಾವನಾದರೂ ಬದಲಾಯಿಸುವುದಾದರೆ, ಅವನ ಮನೆಯಿಂದಲೇ ಒಂದು ತೊಲೆಯನ್ನು ತೆಗೆದು ಅದನ್ನು ಶೂಲವನ್ನಾಗಿ ಮಾಡಿ, ಅದಕ್ಕೆ ಅವನನ್ನು ಏರಿಸಬೇಕು; ಹಾಗು ಆ ಮನೆಯನ್ನು ತಿಪ್ಪೆಯನ್ನಾಗಿ ಮಾಡಿಬಿಡಬೇಕು. ಇದು ನನ್ನ ತೀರ್ಮಾನ.</verse>
				<verse number="12">ತಮ್ಮ ಹೆಸರನ್ನು ಸ್ಥಾಪಿಸುವುದಕ್ಕಾಗಿ ಆ ಸ್ಥಳವನ್ನು ಆರಿಸಿಕೊಂಡ ದೇವರು, ಈ ಆಜ್ಞೆಯನ್ನು ಬದಲಿಸುವುದಕ್ಕಾಗಲಿ, ಜೆರುಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕಾಗಲಿ, ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಪ್ರತಿಯೊಂದು ಜನಾಂಗವನ್ನೂ ನಾಶಮಾಡಲಿ! ದಾರ್ಯಾವೆಷನಾದ ನಾನು ಈ ಆಜ್ಞೆಯನ್ನು ಕೊಟ್ಟಿದ್ದೇನೆ. ಇದನ್ನು ಶ್ರದ್ಧೆಯಿಂದ ಕೈಗೊಳ್ಳತಕ್ಕದ್ದು.”</verse>
				<verse number="13">ಅರಸ ದಾರ್ಯಾವೆಷನು, ಈ ಆಜ್ಞೆಯನ್ನು ಕೊಟ್ಟಿದ್ದರಿಂದ ನದಿಯ ಈಚೆಯ ಅಧಿಪತಿಯಾದ ತತ್ತೆನೈಯ ಹಾಗು ಶೆತರ್ಬೋಜೆನೈಯ ಮತ್ತು ಅವರ ಜೊತೆಗಾರರು ಜಾಗರೂಕರಾಗಿ ಅದನ್ನು ಪಾಲಿಸಿದರು.</verse>
				<verse number="14">ಯೆಹೂದ್ಯರ ಹಿರಿಯರು ಪ್ರವಾದಿ ಹಗ್ಗೈ ಹಾಗು ಇದ್ದೋವಿನ ಮಗ ಜೆಕರೀಯ ಅವರ ಪ್ರಬೋಧನೆಯಿಂದ ಪ್ರೇರಿತರಾಗಿ, ಕಟ್ಟುವ ಕೆಲಸವನ್ನು ಮುಂದುವರಿಸಿದರು. ಇಸ್ರಯೇಲ್ ದೇವರ ಆಜ್ಞಾನುಸಾರ ಪರ್ಷಿಯದ ರಾಜ ಸೈರಸನ, ದಾರ್ಯಾವೆಷ್ ಹಾಗು ಅರ್ತಷಸ್ತ ಅವರ ಅಪ್ಪಣೆಯ ಆಧಾರದಿಂದ ಕಟ್ಟಡವನ್ನು ಮುಗಿಸಿದರು.</verse>
				<verse number="15">ಅರಸ ದಾರ್ಯಾವೆಷನ ಆಳ್ವಿಕೆಯ ಆರನೆಯ ವರ್ಷದ ಫಾಲ್ಗುಣ ಮಾಸದ ಮೂರನೆಯ ದಿನದಲ್ಲಿ ಆಲಯವನ್ನು ಪೂರೈಸಿದರು.</verse>
				<verse number="16">ಯಾಜಕರು, ಲೇವಿಯರು ಹಾಗು ಸೆರೆಯಿಂದ ಹಿಂದಿರುಗಿ ಬಂದ ಬೇರೆ ಇಸ್ರಯೇಲರು ಸಂತೋಷದಿಂದ ಆ ದೇವಾಲಯದ ಪ್ರತಿಷ್ಠೆಯನ್ನು ಆಚರಿಸಿದರು.</verse>
				<verse number="17">ಅವರು ಆ ದೇವಾಲಯದ ಪ್ರತಿಷ್ಠೆಗಾಗಿ ನೂರು ಹೋರಿ, ಇನ್ನೂರು ಟಗರು ಹಾಗು ನಾನೂರು ಕುರಿಮರಿಗಳನ್ನು ಅರ್ಪಿಸಿದರು. ಅಲ್ಲದೆ ಇಸ್ರಯೇಲರ ದೋಷಪರಿಹಾರಾರ್ಥವಾಗಿ, ಅವರ ಕುಲಗಳ ಸಂಖ್ಯಾನುಸಾರ, ಹನ್ನೆರಡು ಹೋತಗಳನ್ನೂ ಸಮರ್ಪಿಸಿದರು.</verse>
				<verse number="18">ಆಮೇಲೆ ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳನ್ನು ಮೋಶೆಯ ಧರ್ಮಶಾಸ್ತ್ರನಿಯಮದ ಪ್ರಕಾರ, ಜೆರುಸಲೇಮಿನ ದೇವರ ಸೇವೆಗೆ ನೇಮಿಸಿದರು.</verse>
				<verse number="19">ಸೆರೆಯಿಂದ ಬಂದವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಪಾಸ್ಕವನ್ನು ಆಚರಿಸಿದರು.</verse>
				<verse number="20">ಯಾಜಕರು ಹಾಗು ಲೇವಿಯರು ತಮ್ಮನ್ನು ಶುದ್ಧಿಪಡಿಸಿಕೊಂಡರು. ಎಲ್ಲರೂ ಶುದ್ಧರಾದ ನಂತರ ಲೇವಿಯರು ಸೆರೆಯಿಂದ ಬಂದವರಿಗಾಗಿ, ತಮ್ಮ ಬಂಧುಗಳಾದ ಯಾಜಕರಿಗಾಗಿ ಹಾಗು ತಮಗಾಗಿ ಪಾಸ್ಕದ ಕುರಿಮರಿಗಳನ್ನು ವಧಿಸಿದರು.</verse>
				<verse number="21">ಸೆರೆಯಿಂದ ಬಂದ ಇಸ್ರಯೇಲರು ಮತ್ತು ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಅರಸುವುದಕ್ಕಾಗಿ, ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದು ಇವರೊಡನೆ ಕೂಡಿಕೊಂಡ ಎಲ್ಲರು, ಪಾಸ್ಕಭೋಜನ ಮಾಡಿದರು.</verse>
				<verse number="22">ಇದಲ್ಲದೆ, ಆಡಂಬರದಿಂದ ಏಳು ದಿವಸಗಳವರೆಗೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಿದರು. ಏಕೆಂದರೆ, ಇಸ್ರಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಸ್ಸೀರಿಯದ ಅರಸ, ತಮಗೆ ಸಹಾಯಮಾಡುವಂತೆ ಸರ್ವೇಶ್ವರ ಅವನ ಮನಪರಿವರ್ತಿಸಿ, ಅವರಿಗೆ ಸಂತೋಷವನ್ನು ಉಂಟುಮಾಡಿದ್ದರು.</verse>
			</chapter>
			<chapter number="7">
				<verse number="1">ಇದಾದ ಮೇಲೆ ಪರ್ಷಿಯ ರಾಜ ಅರ್ತಷಸ್ತನ ಆಳ್ವಿಕೆಯ ಕಾಲದಲ್ಲಿ ಎಜ್ರನು ಬಾಬಿಲೋನಿನಿಂದ ಬಂದನು. ಇವನು ಸೆರಾಯನ ಮಗ; ಸೆರಾಯನು ಅಜರ್ಯನ ಮಗ; ಇವನು ಹಿಲ್ಕೀಯನ ಮಗ;</verse>
				<verse number="2">ಇವನು ಶಲ್ಲೂಮನ ಮಗ; ಇವನು ಚಾದೋಕನ ಮಗ; ಇವನು ಅಹೀಟೂಬನ ಮಗ;</verse>
				<verse number="3">ಇವನು ಅಮರ್ಯನ ಮಗ; ಇವನು ಅಜರ್ಯನ ಮಗ; ಇವನು ಮೆರಾಯೋದನ ಮಗ; ಇವನು ಜೆರಹ್ಯನ ಮಗ;</verse>
				<verse number="4">ಇವನು ಉಜ್ಜೀಯ ಮಗ; ಇವನು ಬುಕ್ಕೀಯ ಮಗ;</verse>
				<verse number="5">ಇವನು ಅಬೀಷೂವನ ಮಗ; ಇವನು ಫೀನೆಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನ ಯಾಜಕನಾದ ಆರೋನನ ಮಗ.</verse>
				<verse number="6">ಎಜ್ರನು, ಇಸ್ರಯೇಲ್ ದೇವರಾದ ಸರ್ವೇಶ್ವರನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾಂಡಿತ್ಯ ಪಡೆದ ಒಬ್ಬ ಧರ್ಮಶಾಸ್ತ್ರಿ ಆಗಿದ್ದನು. ಅವನ ದೇವರಾದ ಸರ್ವೇಶ್ವರನ ಕೃಪಾಹಸ್ತ ಅವನ ಮೇಲಿತ್ತು. ಆದುದರಿಂದ ಅರಸನು ಅವನಿಗೆ ಇಷ್ಟವಾದುದನ್ನೆಲ್ಲ ಅನುಗ್ರಹಿಸಿದನು.</verse>
				<verse number="7">ಅವನೊಡನೆ ಕೆಲವು ಮಂದಿ ಇಸ್ರಯೇಲರು, ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು ಹಾಗು ದೇವಸ್ಥಾನದ ಪರಿಚಾರಕರು ಅರ್ತಷಸ್ತನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಜೆರುಸಲೇಮಿಗೆ ಬಂದರು.</verse>
				<verse number="8">ಎಜ್ರನು ಆ ಅರಸನ ಆಳ್ವಿಕೆಯ ಏಳನೆಯ ವರ್ಷದ ಐದನೆಯ ತಿಂಗಳಲ್ಲಿ ಜೆರುಸಲೇಮನ್ನು ಮುಟ್ಟಿದನು.</verse>
				<verse number="9">ಅವನು ಬಾಬಿಲೋನಿನಿಂದ ಹೊರಟದ್ದು ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ. ತನ್ನ ದೇವರ ಕೃಪಾಹಸ್ತ ಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನ ಜೆರುಸಲೇಮಿಗೆ ಬಂದು ಸೇರಿದನು.</verse>
				<verse number="10">ಸರ್ವೇಶ್ವರನ ಧರ್ಮಶಾಸ್ತ್ರವನ್ನು ಅಭ್ಯಸಿಸಿ ಅನುಸರಿಸಲೂ ಇಸ್ರಯೇಲರಿಗೆ ಅದರ ವಿಧಿನಿಯಮಗಳನ್ನು ಕಲಿಸಲೂ ಅವನು ದೃಢಮನಸ್ಸು ಮಾಡಿಕೊಂಡಿದ್ದನು.</verse>
				<verse number="11">ಯಾಜಕನು, ಶಾಸ್ತ್ರಿಯು ಹಾಗು ಇಸ್ರಯೇಲರಿಗೆ ಕೊಡಲಾದ ಸರ್ವೇಶ್ವರನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನು ಆದ ಎಜ್ರನಿಗೆ ಅರಸ ಅರ್ತಷಸ್ತನು ಕೊಟ್ಟ ಪತ್ರದ ನಕಲು ಇದು:</verse>
				<verse number="12">“ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ ಪರಲೋಕ ದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ,</verse>
				<verse number="13">ನನ್ನ ರಾಜ್ಯದಲ್ಲಿರುವ ಇಸ್ರಯೇಲರಲ್ಲಿ, ಯಾಜಕರಲ್ಲಿ ಹಾಗು ಲೇವಿಯರಲ್ಲಿ ಯಾರು ಯಾರಿಗೆ ಜೆರುಸಲೇಮಿಗೆ ಹೋಗುವುದಕ್ಕೆ ಮನಸ್ಸಿದೆಯೋ ಅವರೆಲ್ಲರು ನಿನ್ನೊಂದಿಗೆ ಹೋಗಬಹುದೆಂದು ಅಪ್ಪಣೆ ಮಾಡುತ್ತೇನೆ.</verse>
				<verse number="14">ನೀನು ಹೋಗಿ, ಜುದೇಯದವರ ಮತ್ತು ಜೆರುಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ಧರ್ಮೋಪದೇಶ ಗ್ರಂಥಕ್ಕೆ ಅನುಗುಣವಾಗಿ ಇದೆಯೋ ಇಲ್ಲವೋ ವಿಮರ್ಶೆಮಾಡಬೇಕು.</verse>
				<verse number="15">ಅರಸನು ಮತ್ತು ಅವನ ಮಂತ್ರಿಗಳು ಜೆರುಸಲೇಮಿನಲ್ಲಿ ವಾಸಿಸುತ್ತಿರುವ ಇಸ್ರಯೇಲ್ ದೇವರಿಗೆ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿಬಂಗಾರವನ್ನು,</verse>
				<verse number="16">ಬಾಬಿಲೋನ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರವನ್ನು, ಹಾಗು ಇಸ್ರಯೇಲ್ ಜನಸಾಮಾನ್ಯರೂ ಯಾಜಕರೂ ಜೆರುಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವಂತ ಇಚ್ಛೆಯಿಂದ ಕೊಡುವ ಕಾಣಿಕೆಗಳನ್ನು, ಅಲ್ಲಿಗೆ ಒಪ್ಪಿಸಬೇಕು. ಹೀಗೆಂದು ತಿಳಿಸಿ ನಾನೂ ಮತ್ತು ನನ್ನ ಏಳು ಮಂದಿ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತಿದ್ದೇವೆ.</verse>
				<verse number="17">ನೀನು ಈ ಹಣದಿಂದ ಹೋರಿ, ಟಗರು, ಕುರಿ, ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯ, ಪಾನದ್ರವ್ಯಗಳನ್ನೂ ಕೊಂಡುಕೊಂಡು, ಅವುಗಳನ್ನು ಜೆರುಸಲೇಮಿನಲ್ಲಿರುವ ನಿಮ್ಮ ದೇವರ ಆಲಯದ ಬಲಿಪೀಠದ ಮೇಲೆ ಸಮರ್ಪಿಸಬೇಕು.</verse>
				<verse number="18">ಉಳಿದ ಬೆಳ್ಳಿಬಂಗಾರವನ್ನು ನಿಮ್ಮ ದೇವರ ಆಜ್ಞೆಯನ್ನು ಅನುಸರಿಸಿ, ನಿನಗೂ ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚಮಾಡು.</verse>
				<verse number="19">ನಿನ್ನ ದೇವರ ಆಲಯದ ಆರಾಧನೆಗಾಗಿ ನಿನ್ನ ವಶಕ್ಕೆ ಕೊಡುವ ಸಾಮಗ್ರಿಗಳನ್ನು ಜೆರುಸಲೇಮಿನ ದೇವರ ಸನ್ನಿಧಿಗೆ ತೆಗೆದುಕೊಂಡು ಹೋಗು.</verse>
				<verse number="20">ನಿನ್ನ ದೇವರ ಆಲಯಕ್ಕಾಗಿ ನೀನು ಬೇರೆ ಯಾವುದನ್ನಾದರೂ ವೆಚ್ಚಮಾಡಬೇಕಾದರೆ, ಅದನ್ನು ರಾಜಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು.</verse>
				<verse number="21">:ಅರ್ತಷಸ್ತರಾಹನಾದ ನಾನು ನದಿ ಆಚೆಯ ಪ್ರಾಂತ್ಯಗಳ ಭಂಡಾರ ಮುಖ್ಯಸ್ಥರಿಗೆ ಆಜ್ಞಾಪಿಸುವುದೇನೆಂದರೆ - ಯಾಜಕನೂ ಪರಲೋಕ ದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.</verse>
				<verse number="22">ಬೆಳ್ಳಿಯನ್ನು 3400 ಕಿಲೋಗ್ರಾಂ, ಗೋದಿಯನ್ನು 10,000 ಕಿಲೋಗ್ರಾಂ, ದ್ರಾಕ್ಷಾರಸವನ್ನು 200 ಲೀಟರ್, ಎಣ್ಣೆಯನ್ನು 2000 ಲೀಟರ್ ಇಷ್ಟರ ಮಟ್ಟಿಗೂ ಕೊಡಬಹುದು; ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು.</verse>
				<verse number="23">ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೇವಕೋಪವುಂಟಾಗದ ಹಾಗೆ ನೀವು ಪರಲೋಕ ದೇವರ ಆಜ್ಞಾನುಸಾರ ಬೇಕಾದುದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡಬೇಕು.</verse>
				<verse number="24">ಇದಲ್ಲದೆ, ಆ ದೇವಾಲಯದ ಪರಿಚರ್ಯೆಯಲ್ಲಿದ್ದ, ಯಾಜಕ, ಲೇವಿಯ, ಗಾಯಕ, ದ್ವಾರಪಾಲಕ, ಚಾಕರ ಮುಂತಾದ ಸೇವಕರಲ್ಲಿ ಯಾವನಿಂದಲೂ ಶುಲ್ಕ, ತೆರಿಗೆ, ಸುಂಕ ಇವುಗಳನ್ನು ವಸೂಲಿ ಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.</verse>
				<verse number="25">“ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶ ಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಪಂಚಾಯತರನ್ನೂ ನೇಮಿಸು. ಅವರು ನದಿಯಾಚೆಯ ಇಸ್ರಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.</verse>
				<verse number="26">ನಿನ್ನ ದೇವರ ಧರ್ಮವನ್ನೂ ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ ವಿಧಿಸುವುದು, ಗಡಿಪಾರು ಮಾಡುವುದು, ದಂಡ ತೆರಿಸುವುದು, ಬೇಡಿಹಾಕುವುದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ನೀಡಬೇಕು.”</verse>
				<verse number="27">ಎಜ್ರನ ಮಾತುಗಳು ಇವು: “ನಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ಸ್ತೋತ್ರವಾಗಲಿ! ಜೆರುಸಲೇಮಿನಲ್ಲಿರುವ ದೇವಾಲಯವನ್ನು ಶೋಭಿಸುವ ಸ್ಥಿತಿಗೆ ತರುವುದಕ್ಕೆ ಸರ್ವೇಶ್ವರನ ಪ್ರೇರಣೆಯಿಂದಲೇ ಅರಸನು ಮನಸ್ಸು ಮಾಡಿದ್ದಾನೆ:</verse>
				<verse number="28">ಅರಸನ, ಅವನ ಮಂತ್ರಿಗಳ ಮತ್ತು ಅವನ ಎಲ್ಲ ವಿಶಿಷ್ಟ ಪದಾಧಿಕಾರಿಗಳ ಮುಂದೆ ನನಗೆ ದೇವರು ದಯೆತೋರಿಸಿದ್ದಾರೆ. ನನ್ನ ದೇವರಾದ ಸರ್ವೇಶ್ವರನ ಕೃಪಾಹಸ್ತ ನನ್ನ ಮೇಲಿದ್ದುದರಿಂದಲೇ ನಾನು ಧೈರ್ಯ ತಂದುಕೊಂಡು, ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವುಮಂದಿ ಇಸ್ರಯೇಲ್ ಮುಖಂಡರನ್ನು ಒಂದುಗೂಡಿಸಿಕೊಂಡೆ.”</verse>
			</chapter>
			<chapter number="8">
				<verse number="1">ಅರ್ತಷಸ್ತನ ಆಳ್ವಿಕೆಯಲ್ಲಿ ನನ್ನೊಂದಿಗೆ ಬಾಬಿಲೋನಿನಿಂದ ಹೊರಟ ಗೋತ್ರಪ್ರಧಾನರ ಮತ್ತು ಅವರ ಸಂತಾನದವರ ವಿವರ ಹೀಗಿದೆ:</verse>
				<verse number="2">ಫೀನೆಹಾಸನ ಸಂತಾನದವರಲ್ಲಿ ಗೇರ್ಷೋಮ್; ಈತಾಮಾರನ ಸಂತಾನದವರಲ್ಲಿ ದಾನಿಯೇಲ್;</verse>
				<verse number="3">ದಾವೀದನ ಸಂತಾನದವರಲ್ಲಿ ಶೆಕನ್ಯನ ಮೊಮ್ಮಗನಾದ ಹಟ್ಟೂಷ್; ಪರೋಷಿನವರಲ್ಲಿ ಜೆಕರ್ಯ ಮತ್ತು ಅವನೊಡನೆ ಅವನ ವಂಶಕ್ಕೆ ಸೇರಿದ 150 ಮಂದಿ ಗಂಡಸರು;</verse>
				<verse number="4">ಪಹತ್ ಮೋವಾಬಿನವರಲ್ಲಿ ಜೆರಹ್ಯನರ ಮಗ ಎಲ್ಯೆ ಹೋವೇನ್ಯೆಯ ಮತ್ತು ಅವನೊಡನೆ 200 ಮಂದಿ ಗಂಡಸರು;</verse>
				<verse number="5">ಜತ್ತೂವಿನವರಲ್ಲಿ ಯಹಜೀಯೇಲನ ಮಗ ಶೆಕನ್ಯನು ಮತ್ತು ಅವನೊಡನೆ 300 ಮಂದಿ ಗಂಡಸರು;</verse>
				<verse number="6">ಆದೀನನವರಲ್ಲಿ ಯೋನಾತಾನನ ಮಗ ಎಬೆದನು ಮತ್ತು ಅವನೊಡನೆ 50 ಮಂದಿ ಗಂಡಸರು;</verse>
				<verse number="7">ಎಲಾಮಿನವರಲ್ಲಿ ಅತಲ್ಯನ ಮಗ ಯೆಶಾಯನ ಮತ್ತು ಅವನೊಡನೆ 70 ಮಂದಿ ಗಂಡಸರು;</verse>
				<verse number="8">ಶೆಫಟ್ಯನವರಲ್ಲಿ ಮೀಕಾಯೇಲನ ಮಗ ಜೆಬದ್ಯನು ಮತ್ತು ಅವನೊಡನೆ 10 ಮಂದಿ ಗಂಡಸರು;</verse>
				<verse number="9">ಯೋವಾಬನವರಲ್ಲಿ ಯೆಹೀಯೇಲನ ಮಗ ಓಬದ್ಯನು ಮತ್ತು ಅವನೊಡನೆ 218 ಮಂದಿ ಗಂಡಸರು;</verse>
				<verse number="10">ಬಾನೀಯವರಲ್ಲಿ ಯೋಸಿಫ್ಯನ ಮಗ ಶೆಲೋಮೀತನು ಮತ್ತು ಅವನೊಡನೆ 160 ಮಂದಿ ಗಂಡಸರು;</verse>
				<verse number="11">ಬೇಬೈಯವರಲ್ಲಿ ಬೇಬೈಯ ಮಗ ಜೆಕರ್ಯನು ಮತ್ತು ಅವನೊಡನೆ 28 ಮಂದಿ ಗಂಡಸರು;</verse>
				<verse number="12">ಅಜ್ಗಾದನವರಲ್ಲಿ ಹಕ್ಕಾಟಾನನ ಮಗ ಯೋಹಾನಾನನು ಮತ್ತು ಅವನೊಡನೆ 110 ಮಂದಿ ಗಂಡಸರು;</verse>
				<verse number="13">ಅದೋನೀಕಾಮಿನವರಲ್ಲಿ ಕಡೆಯವರಾದ ಎಲೀಫೆಟ್, ಎಟ್ಮೀಯೇಲ್, ಶೆಮಾಯ ಎಂಬ ಹೆಸರುಳ್ಳವರು ಮತ್ತು ಅವರೊಡನೆ 60 ಮಂದಿ ಗಂಡಸರು;</verse>
				<verse number="14">ಬಿಗ್ವೈಯವರಲ್ಲಿ ಜಕ್ಕೂರನ ಮಗ ಊತೈಯ ಮತ್ತು ಅವನೊಡನೆ 70 ಮಂದಿ ಗಂಡಸರು;</verse>
				<verse number="15">ಅಹವಾ ಪ್ರಾಂತ್ಯದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಒಂದುಗೂಡಿಸಿದೆ. ಅಲ್ಲಿ ಮೂರು ದಿನ ಪಾಳೆಯ ಮಾಡಿಕೊಂಡ ಮೇಲೆ ನನ್ನೊಡನೆ ಜನಸಾಮಾನ್ಯರು ಹಾಗು ಯಾಜಕರು ಬಂದಿದ್ದರಾದರೂ ಲೇವಿಯರಲ್ಲಿ ಯಾರೂ ಬರದೆ ಇದ್ದುದು ಕಂಡುಬಂದಿತು.</verse>
				<verse number="16">ಆದುದರಿಂದ ಮುಖ್ಯಸ್ಥರಾದ ಎಲೀಯೇಜೆರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ, ಮೆಷುಲ್ಲಾಮ್ ಇವರನ್ನೂ</verse>
				<verse number="17">ಪಂಡಿತರಾದ ಯೋಯಾರೀಬ್, ಎಲ್ನಾತಾನ್ ಇವರನ್ನೂ ಕರೆಯಿಸಿದೆ; ಕಾಸಿಫ್ಯ ಊರಿನ ಮುಖ್ಯಸ್ಥನಾದ ಇದ್ದೋವಿನ ಬಳಿಗೆ ಹೋಗಬೇಕೆಂದು ಅಪ್ಪಣೆಮಾಡಿದೆ; ನಮ್ಮ ಬಳಿಗೆ ದೇವಾಲಯ ಸೇವಕರನ್ನು ಕಳುಹಿಸುವ ಹಾಗೆ ಅವರು ಇದ್ದೋವಿಗೂ ಕಾಸಿಫ್ಯ ಊರಿನಲ್ಲಿ ವಾಸಿಸುತ್ತಿದ್ದ ಅವನ ಸಹೋದರರಾದ ದೇವಸ್ಥಾನ ಪರಿಚಾರಕ ವರ್ಗದವರಿಗೂ ಹೇಳತಕ್ಕ ಮಾತುಗಳನ್ನು ಹೇಳಿಕೊಟ್ಟೆ. ಆ ಊರಿನವರು ಪರಿಚಾರಕ ವರ್ಗದವರಾಗಿದ್ದರು.</verse>
				<verse number="18">ನಮ್ಮ ದೇವರ ಕೃಪಾಹಸ್ತ ನಮ್ಮ ಮೇಲೆ ಇದ್ದುದರಿಂದ ಅವರು ಇಸ್ರಯೇಲನ ಮಗ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನು, ಶೇರೇಬ್ಯನನ್ನು, ಅವನ ಪುತ್ರ ಭ್ರಾತೃಗಳಲ್ಲಿ ಹದಿನೆಂಟು ಮಂದಿಯನ್ನು,</verse>
				<verse number="19">ಮೆರಾರೀಯರಲ್ಲಿ ಹಷಭ್ಯನನ್ನು, ಅವನೊಡನೆ ಯೆಶಾಯನನ್ನು, ಅವರ ಪುತ್ರಭ್ರಾತೃಗಳಲ್ಲಿ ಇಪ್ಪತ್ತು ಮಂದಿಯನ್ನು,</verse>
				<verse number="20">ಹಾಗು ದಾವೀದನೂ ಅವನ ಸರದಾರರೂ ಲೇವಿಯರ ಸಹಾಯಕ್ಕಾಗಿ ಕೊಟ್ಟ ದೇವಸ್ಥಾನ ಪರಿಚಾರಕರಲ್ಲಿ ಇನ್ನೂರ ಇಪ್ಪತ್ತು ಮಂದಿಯನ್ನು ನಮ್ಮ ಬಳಿಗೆ ಕರೆದುಕೊಂಡು ಬಂದರು. ಇವರೆಲ್ಲರ ಹೆಸರುಗಳು ಪಟ್ಟಿಯಲ್ಲಿದ್ದವು.</verse>
				<verse number="21">ಆಮೇಲೆ ಆ ಅಹವಾ ನದಿಯ ಬಳಿಯಲ್ಲಿ, ನಾವು ಉಪವಾಸದಿಂದಿದ್ದು ನಮ್ಮ ದೇವರ ಮುಂದೆ ನಮ್ಮನ್ನೇ ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಕೋರಬೇಕೆಂದು ಪ್ರಕಟಿಸಿದೆ.</verse>
				<verse number="22">ನಮ್ಮ ದೇವರ ಕೃಪಾಹಸ್ತ ಅವರ ಎಲ್ಲ ಶರಣಾರ್ಥಿಗಳ ಮೇಲಿತ್ತು. ನಮ್ಮ ದೇವರನ್ನು ತೊರೆದುಬಿಟ್ಟವರೆಲ್ಲರು ಅವರ ಪ್ರಬಲವಾದ ರೌದ್ರಕ್ಕೆ ಗುರಿಯಾಗುವರು ಎಂದು ನಾವು ಅರಸನ ಮುಂದೆ ಹೇಳಿದ್ದೆವು. ಆದುದರಿಂದ ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕಾಗಿ ಸೈನ್ಯವನ್ನಾಗಲಿ, ಅಶ್ವಬಲವನ್ನಾಗಲಿ ಕೇಳಿಕೊಳ್ಳುವುದಕ್ಕೆ ನಾನು ನಾಚಿಕೊಂಡಿದ್ದೆ.</verse>
				<verse number="23">ನಾವು ಈ ಕಾರಣ ಉಪವಾಸಮಾಡಿ ದೇವರನ್ನು ಪ್ರಾರ್ಥಿಸಿದೆವು; ಅವರು ನಮಗೆ ಪ್ರಸನ್ನರಾದರು.</verse>
				<verse number="24">ಅನಂತರ ನಾನು ಯಾಜಕರ ಮುಖ್ಯಸ್ಥರಿಂದ ಶೇರೇಬ್ಯನನ್ನೂ ಹಷಬ್ಯನನ್ನೂ ಇವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಆರಿಸಿಕೊಂಡೆ.</verse>
				<verse number="25">ಅರಸನಿಂದಲು, ಅವನ ಮಂತ್ರಿಗಳಿಂದಲು, ಪದಾಧಿಕಾರಿಗಳಿಂದಲು, ಅಲ್ಲಿದ್ದ ಎಲ್ಲ ಇಸ್ರಯೇಲರಿಂದಲು ನಮ್ಮ ದೇವರ ಆಲಯಕ್ಕೆ ಕಾಣಿಕೆಯಾಗಿ ಕೊಡಲಾಗಿದ್ದ ಬೆಳ್ಳಿಬಂಗಾರವನ್ನು ಹಾಗು ಸಾಮಾಗ್ರಿಗಳನ್ನು ತೂಕಮಾಡಿ ಅವರಿಗೆ ಒಪ್ಪಿಸಿದೆ.</verse>
				<verse number="26">ಅವರ ಕೈಗೆ ಕೊಟ್ಟ ಸಾಮಾನುಗಳ ತೂಕ: ಬೆಳ್ಳಿ 22 ಮೆಟ್ರಿಕ್ ಟನ್; ಬೆಳ್ಳಿಯ ನೂರು ಸಾಮಾಗ್ರಿಗಳ ತೂಕ 70 ಕಿಲೋಗ್ರಾಂ; ಬಂಗಾರ 3400 ಕಿಲೋಗ್ರಾಂ.</verse>
				<verse number="27">ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ 8:4 ಕಿಲೋಗ್ರಾಂ; ಇವುಗಳಲ್ಲದೆ ಶ್ರೇಷ್ಠವಾದ ಕಂಚಿನ ಎರಡು ಪಾತ್ರೆಗಳಿದ್ದವು. ಅವು ಬಂಗಾರದಷ್ಟು ಬೆಲೆಯುಳ್ಳವುಗಳು.</verse>
				<verse number="28">ನಾನು ಅವರಿಗೆ, ‘ನೀವು ಸರ್ವೇಶ್ವರನ ಸ್ವಕೀಯರು; ಆ ಪಾತ್ರೆಗಳು ಕೂಡ ದೇವರ ವಸ್ತುಗಳು; ಆ ಬೆಳ್ಳಿಬಂಗಾರ ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ಸಮರ್ಪಿತವಾದ ಕಾಣಿಕೆ.</verse>
				<verse number="29">ಆದುದರಿಂದ ನೀವು ಜಾಗರೂಕರಾಗಿ ಇದ್ದು ಜೆರುಸಲೇಮಿನಲ್ಲಿರುವ ಯಾಜಕರ ಮತ್ತು ಲೇವಿಯರ ಮುಖ್ಯಸ್ಥರ ಮುಂದೆ ಹಾಗು ಇಸ್ರಯೇಲ್ ಗೋತ್ರಪ್ರಧಾನರ ಮುಂದೆ ಇವುಗಳನ್ನು ತೂಕಮಾಡಿ ಸರ್ವೇಶ್ವರನ ಆಲಯದ ಕೊಠಡಿಗಳಲ್ಲಿಡುವವರೆಗೂ ಎಚ್ಚರಿಕೆಯಿಂದ ನೋಡಿಕೊಳ್ಳಿ’ ಎಂದು ಹೇಳಿದೆ.</verse>
				<verse number="30">ಆ ಯಾಜಕರು ಹಾಗು ಲೇವಿಯರು ಜೆರುಸಲೇಮಿನ ದೇವಾಲಯಕ್ಕೆ ತಲುಪಿಸುವ ಉದ್ದೇಶದಿಂದ ಆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿಸಿ ತಮ್ಮ ವಶದಲ್ಲಿ ಇಟ್ಟುಕೊಂಡರು.</verse>
				<verse number="31">ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಜೆರುಸಲೇಮಿಗೆ ಹೊರಟೆವು. ನಮ್ಮ ದೇವರ ಕೃಪಾಹಸ್ತ ನಮ್ಮನ್ನು ಪಾಲಿಸುತ್ತಾ ಇತ್ತು. ಶತ್ರುಗಳ ಹಾಗು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ಅವರು ನಮ್ಮನ್ನು ಪಾರುಮಾಡಿದರು.</verse>
				<verse number="32">ನಾವು ಜೆರುಸಲೇಮನ್ನು ಸೇರಿ ಮೂರು ದಿವಸ ವಿಶ್ರಮಸಿಕೊಂಡೆವು.</verse>
				<verse number="33">ನಾಲ್ಕನೆಯ ದಿನ ನಮ್ಮ ದೇವರ ಆಲಯದಲ್ಲಿ ಊರೀಯನ ಮಗ ಮೆರೇಮೋತ್ ಎಂಬ ಯಾಜಕನಿಗೆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿ ಒಂದೊಂದಾಗಿ ಎಣಿಸಿ ಕೊಟ್ಟೆವು. ಫೀನೆಹಾಸನ ವಂಶದವನಾದ ಎಲ್ಲಾಜಾರ್, ಯೇಷೂವನ ಮಗ ಯೋಜಾಬಾದ್, ಬಿನ್ನೂಯನ ಮಗ ನೋವದ್ಯ ಎಂಬ ಲೇವಿಯರು ಅವನ ಜೊತೆಯಲ್ಲಿದ್ದರು.</verse>
				<verse number="34">ಎಲ್ಲವುಗಳ ತೂಕ ತಕ್ಷಣವೇ ಲಿಖಿತವಾಯಿತು.</verse>
				<verse number="35">ದೇಶಾಂತರದ ಸೆರೆಯಿಂದ ಮರಳಿ ಬಂದವರು ಇಸ್ರಯೇಲ್ ದೇವರಿಗೆ ತೊಂಬತ್ತಾರು ಟಗರುಗಳನ್ನು, ಎಪ್ಪತ್ತೇಳು ಕುರಿಮರಿಗಳನ್ನು, ಸಮಸ್ತ ಇಸ್ರಯೇಲರ ಪರವಾಗಿ ಹನ್ನೆರಡು ಹೋರಿಗಳನ್ನು ಹಾಗು ದೋಷಪರಿಹಾರಾರ್ಥವಾಗಿ ಹನ್ನೆರಡು ಹೋತಗಳನ್ನು ದಹನಬಲಿಗಾಗಿ ಸಮರ್ಪಿಸಿದರು. ಅಂತೆಯೇ ಇವೆಲ್ಲವೂ ಸರ್ವೇಶ್ವರನಿಗೆ ದಹನಬಲಿಯಾಗಿ ಸಮರ್ಪಿತವಾದುವು.</verse>
				<verse number="36">ಆಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ ನದಿಯಾಚೆಯ ರಾಜ್ಯಪಾಲರಿಗೂ ಒಪ್ಪಿಸಿದರು. ಅಂದಿನಿಂದ ಆ ಅಧಿಕಾರಿಗಳು ಜನರಿಗೂ ದೇವಾಲಯಕ್ಕೂ ಸಹಾಯಮಾಡಿದರು.</verse>
			</chapter>
			<chapter number="9">
				<verse number="1">ಇದಾದನಂತರ ಮುಖ್ಯಸ್ಥರು ನನ್ನ ಬಳಿಗೆ ಬಂದು, “ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಈಜಿಪ್ಟರು, ಅಮೋರಿಯರು ಎಂಬ ಅನ್ಯದೇಶಗಳವರ ಪದ್ಧತಿಯನ್ನು ತೊರೆಯದೆ, ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿ,</verse>
				<verse number="2">ಇಸ್ರಯೇಲರಲ್ಲಿ ಸಾಧಾರಣಜನರು, ಯಾಜಕರು, ಲೇವಿಯರು ತಮಗೆ ಹಾಗು ತಮ್ಮ ಗಂಡುಮಕ್ಕಳಿಗೆ ಅವರಿಂದ ಹೆಣ್ಣುಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಗುತ್ತಿದೆ; ನಾಯಕರೇ, ಮುಖ್ಯಸ್ಥರೇ, ಈ ದ್ರೋಹಕ್ಕೆ ಮುಂದಾಳುಗಳಾಗುತ್ತಿದ್ದಾರೆ,” ಎಂದು ತಿಳಿಸಿದರು.</verse>
				<verse number="3">ಈ ಸಮಾಚಾರವನ್ನು ಕೇಳಿದೊಡನೆ ನಾನು ಸಿಟ್ಟಿನಿಂದ ಬಟ್ಟೆಗಳನ್ನೂ ಮೇಲಂಗಿಯನ್ನೂ ಹರಿದುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆ.</verse>
				<verse number="4">ಇಸ್ರಯೇಲ್ ದೇವರ ವಿಧಿಗಳ ಬಗ್ಗೆ ಗೌರವವಿದ್ದವರೆಲ್ಲರು ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು, ನನ್ನನ್ನು ಕೂಡಿಕೊಂಡರು. ನಾನು ಸಂಧ್ಯಾನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧವಾಗಿ ಕುಳಿತುಕೊಂಡಿದ್ದೆ;</verse>
				<verse number="5">ಆಮೇಲೆ ದೇಹದಂಡನೆ ಮಾಡುವುದನ್ನು ಬಿಟ್ಟು, ಹರಿದ ಬಟ್ಟೆವಸ್ತ್ರಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ, ನನ್ನ ದೇವರಾದ ಸರ್ವೇಶ್ವರನ ಕಡೆಗೆ ಕೈಗಳನ್ನೆತ್ತಿ ಹೀಗೆಂದು ಪ್ರಾರ್ಥಿಸಿದೆ:</verse>
				<verse number="6">“ನನ್ನ ದೇವರೇ, ನಾನು ಮನಗುಂದಿದವನು ಆಗಿದ್ದೇನೆ; ನಿಮ್ಮ ಕಡೆಗೆ ಮುಖವನ್ನು ಎತ್ತುವುದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ; ನಮ್ಮ ಅಪರಾಧ ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ!</verse>
				<verse number="7">ನಾವು ನಮ್ಮ ಪಿತೃಗಳ ಕಾಲದಿಂದ ಇಂದಿನವರೆಗೂ ಮಹಾಪರಾಧಿಗಳೇ; ನಮ್ಮ ಪಾಪಗಳ ನಿಮಿತ್ತ ನಾವೂ ನಮ್ಮ ಅರಸರೂ ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಸಿಕ್ಕಿಬಿದ್ದೆವು. ಈಗಿರುವಂತೆ, ಕತ್ತಿಗೂ ಸೆರೆಗೂ ಸುಲಿಗೆಗೂ ಅಪಮಾನಕ್ಕೂ ಗುರಿ ಆದೆವು.</verse>
				<verse number="8">ಆದರೂ ನಮ್ಮ ದೇವರಾದ ಸರ್ವೇಶ್ವರಾ, ಒಂದು ಕ್ಷಣ ನಮಗೆ ನೀವು ಪ್ರಸನ್ನರಾಗಿ ನಮ್ಮಲ್ಲಿ ಸ್ವಲ್ಪ ಜನರನ್ನಾದರೂ ರಕ್ಷಣೆಗಾಗಿ ಉಳಿಸಿ, ತಮ್ಮ ಪರಿಶುದ್ಧಸ್ಥಳದಲ್ಲಿ ಮೊಳೆಯುವಂತೆ, ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಬೆಳಗಿಸಿ‌, ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ನವಜೀವವನ್ನು ಅನುಗ್ರಹಿಸಿದಿರಿ.</verse>
				<verse number="9">ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕಾಗಿ, ನಮಗೆ ನವಜೀವನ ಪ್ರಾಪ್ತವಾಗುವಂತೆ ಹಾಗು ಜುದೇಯದಲ್ಲೂ ಜೆರುಸಲೇಮಿನಲ್ಲೂ ನಮಗೆ ಅಭಯಾಶ್ರಯ ಸಿಕ್ಕುವಂತೆ, ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದೀರಿ.</verse>
				<verse number="10">ಇಷ್ಟು ಉಪಕಾರವನ್ನು ಪಡೆದ ನಾವು ಬೇರೆ ಏನನ್ನು ತಾನೆ ಅರಿಕೆಮಾಡಿಕೊಳ್ಳೋಣ! ನಮ್ಮ ದೇವರೇ, ನಿಮ್ಮ ಆಜ್ಞೆಗಳನ್ನು ಉಲ್ಲಂಘಿಸಿದ್ದೇವೆ, ಅಕಟಾ!</verse>
				<verse number="11">ನೀವು ನಿಮ್ಮ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ, ‘ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ನಾಡು ಅನ್ಯದೇಶಗಳವರ ಅಶುದ್ಧತ್ವದಿಂದಲೂ ಅವರ ವಿಗ್ರಹಗಳಿಂದಲೂ ಮಲಿನವಾಗಿದೆ. ಅದು ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಆ ವಿಗ್ರಹಗಳ ಅಸಹ್ಯತೆಯಿಂದ ತುಂಬಿದೆ.</verse>
				<verse number="12">ಹೀಗಿರಲಾಗಿ, ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂಬಾರದು, ನಿಮ್ಮ ಗಂಡುಮಕ್ಕಳಿಗಾಗಿ ಅವರ ಹೆಣ್ಣುಮಕ್ಕಳನ್ನು ತೆಗೆದುಕೊಳ್ಳಲೂಬಾರದು. ಅವರಿಗೆ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ, ನೀವು ಬಲಗೊಂಡು, ಆ ನಾಡಿನ ಸಮೃದ್ಧಿಯನ್ನು ಅನುಭವಿಸಿ ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತ ಸೊತ್ತನ್ನಾಗಿ ಬಿಡುವಿರಿ’ ಎಂದು ಹೇಳಿದಿರಲ್ಲವೆ?</verse>
				<verse number="13">ನಮ್ಮ ದುಷ್ಕರ್ಮ ಹಾಗು ಮಹಾಪರಾಧಗಳ ನಿಮಿತ್ತ ಇಷ್ಟೆಲ್ಲಾ ಕೇಡು ಬಂದಿದ್ದರೂ, ನಮ್ಮ ದೇವರಾದ ನೀವು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ, ನಮ್ಮಲ್ಲಿ ಇಷ್ಟುಮಂದಿಯನ್ನು ಉಳಿಸಿದ್ದೀರಿ;</verse>
				<verse number="14">ಹೀಗಿರುವಲ್ಲಿ, ನಾವು ಪುನಃ ನಿಮ್ಮ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ವಿವಾಹ ಸಂಬಂಧ ಬೆಳೆಸುವುದು ಯೋಗ್ಯವೇ? ಹಾಗೆ ಮಾಡಿದರೆ, ನೀವು ನಮ್ಮ ಮೇಲೆ ರೌದ್ರಾವೇಶವುಳ್ಳವರಾಗಿ, ಯಾರೂ ತಪ್ಪಿಸಿಕೊಳ್ಳದಂತೆ ನಮ್ಮನ್ನು ಮುಗಿಸಿಬಿಡುವಿರಲ್ಲವೇ?</verse>
				<verse number="15">ಸರ್ವೇಶ್ವರಾ, ಇಸ್ರಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀವು ಧರ್ಮಸ್ವರೂಪರೆಂದು ಸ್ಪಷ್ಟವಾಯಿತು. ನಾವಾದರೋ ನಿಮ್ಮ ದೃಷ್ಟಿಯಲ್ಲಿ ಅಪರಾಧಿಗಳು, ಈ ನಮ್ಮ ದುಷ್ಕೃತ್ಯದ ಸಲುವಾಗಿ ನಿಮ್ಮೆದುರಿನಲ್ಲಿ ನಿಲ್ಲಲಾರೆವು.”</verse>
			</chapter>
			<chapter number="10">
				<verse number="1">ಎಜ್ರನು ದೇವಾಲಯದ ಮುಂದೆ ಹೀಗೆ ಅಡ್ಡಬಿದ್ದು ಅಳುತ್ತಾ, ವಿಜ್ಞಾಪನೆಯನ್ನೂ ಪಾಪ ನಿವೇದನೆಯನ್ನೂ ಮಾಡುತ್ತಿರುವಾಗ ಇಸ್ರಯೇಲರ ಗಂಡಸರು, ಹೆಂಗಸರು ಹಾಗು ಮಕ್ಕಳು ಮಹಾಸಮೂಹವಾಗಿ ಅವನ ಬಳಿಗೆ ಬಂದು ಕೂಡಿದರು. ಜನರೆಲ್ಲರು ಅಲ್ಲಿ ಬಹಳವಾಗಿ ದುಃಖಿಸತೊಡಗಿದರು.</verse>
				<verse number="2">ಆಗ ಏಲಾಮ್ ಸಂತಾನದ ಯೆಹೀಯೇಲನ ಮಗ ಶೆಕನ್ಯನು ಎಜ್ರನಿಗೆ, “ಇಸ್ರಯೇಲರಾದ ನಾವು ಅನ್ಯಜನರಾದ ಈ ದೇಶನಿವಾಸಿಗಳಿಂದ ಹೆಣ್ಣನ್ನು ತೆಗೆದುಕೊಂಡು ನಮ್ಮ ದೇವರಿಗೆ ವಿರುದ್ಧ ದ್ರೋಹಮಾಡಿದ್ದರೂ ನಮ್ಮನ್ನು ನಾವು ತಿದ್ದಿಕೊಳ್ಳುವ ನಿರೀಕ್ಷೆ ಇನ್ನೂ ಉಂಟು.</verse>
				<verse number="3">ನೀನು ಹಾಗು ನಮ್ಮ ದೇವರ ಆಜ್ಞೆಯನ್ನು ಗೌರವಿಸುವವರು ಹೇಳಿಕೊಟ್ಟ ಬುದ್ಧಿವಾದಾನುಸಾರ ಅಂಥ ಎಲ್ಲ ಹೆಂಡತಿಯರನ್ನೂ ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ, ಈಗಲೇ ನಮ್ಮ ದೇವರಿಗೆ ಪ್ರತಿಜ್ಞೆಮಾಡಿ, ಧರ್ಮಶಾಸ್ತ್ರಕ್ಕನುಸಾರ ನಡೆಯೋಣ.</verse>
				<verse number="4">ಎದ್ದೇಳು, ಈ ಕಾರ್ಯ ನಿನ್ನಿಂದಾಗಬೇಕು. ನಾವು ನಿನಗೆ ಸಹಾಯಕರಾಗಿ ನಿಲ್ಲುತ್ತೇವೆ. ಧೈರ್ಯದಿಂದ ಮುನ್ನುಗ್ಗು,” ಎಂದು ಹೇಳಿದನು.</verse>
				<verse number="5">ಆಗ ಎಜ್ರನು ಎದ್ದು, ಯಾಜಕರ ಮತ್ತು ಲೇವಿಯರ ಮುಖ್ಯಸ್ಥರಿಗೂ ಎಲ್ಲ ಇಸ್ರಯೇಲರಿಗೂ ಈ ಪ್ರಕಾರ ನಡೆಯುವುದಾಗಿ ಪ್ರಮಾಣ ಮಾಡಬೇಕೆಂದು ಹೇಳಿದನು. ಅವರು ಹಾಗೆಯೇ ಪ್ರಮಾಣ ಮಾಡಿದರು.</verse>
				<verse number="6">ಆಮೇಲೆ ಎಜ್ರನು ಎದ್ದು, ದೇವಾಲಯದ ಮುಂಭಾಗದ ಸ್ಥಳವನ್ನು ಬಿಟ್ಟು, ಎಲ್ಯಾಷೀಬನ ಮಗ ಯೆಹೋಹಾನಾನನ ಕೊಠಡಿಗೆ ಹೋಗಿ, ಅಲ್ಲಿ ಸೆರೆ ಇಂದ ಬಂದವರಿಗಾಗಿ ದುಃಖಿಸುತ್ತಾ ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.</verse>
				<verse number="7">ತರುವಾಯ ಜುದೇಯದಲ್ಲೂ ಜೆರುಸಲೇಮಿನಲ್ಲೂ ಈ ಪ್ರಕಟನೆಯನ್ನು ಹೊರಡಿಸಲಾಯಿತು: “ಸೆರೆಯಿಂದ ಬಂದವರೆಲ್ಲರೂ ಜೆರುಸಲೇಮಿನಲ್ಲಿ ಒಂದುಗೂಡಬೇಕು.</verse>
				<verse number="8">ಮುಖ್ಯಸ್ಥರ ಮತ್ತು ಹಿರಿಯರ ನಿರ್ಣಯದ ಪ್ರಕಾರ ಮೂರು ದಿವಸಗಳೊಳಗೆ ಬರಬೇಕು; ಬಾರದವನು ತನ್ನ ಎಲ್ಲ ಆಸ್ತಿಪಾಸ್ತಿಯನ್ನೂ ಕಳೆದುಕೊಂಡು ಸೆರೆಯಿಂದ ಬಂದವರ ಸಭೆಯಿಂದ ಬಹಿಷ್ಕೃತನಾಗುವನು,” ಎಂದು ತಿಳಿಸಲಾಯಿತು.</verse>
				<verse number="9">ಆಗ ಮೂರನೆಯ ದಿನದಲ್ಲಿ ಅಂದರೆ, ಒಂಬತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ, ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲ ಪುರುಷರೂ ಜೆರುಸಲೇಮಿನಲ್ಲಿ ಕೂಡಿಬಂದರು. ಆ ಸಂಗತಿಯ ನಿಮಿತ್ತ ಹಾಗು ದೊಡ್ಡ ಮಳೆಯ ದೆಸೆಯಿಂದ ನಡುಗುತ್ತಾ ಬಂದು ದೇವಾಲಯದ ಬಯಲಿನಲ್ಲಿ ಕುಳಿತುಕೊಂಡರು.</verse>
				<verse number="10">ಆಗ ಯಾಜಕನಾದ ಎಜ್ರನು ಎದ್ದು ನಿಂತು ಅವರಿಗೆ, “ನೀವು ಅನ್ಯಜನರ ಹೆಣ್ಣುಗಳನ್ನು ಮದುವೆ ಮಾಡಿಕೊಂಡು ಇಸ್ರಯೇಲರ ಅಪರಾಧವನ್ನು ಹೆಚ್ಚಿಸಿ ಇದ್ದೀರಿ.</verse>
				<verse number="11">ಈಗ ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರಸ್ವಾಮಿಗೆ ನಿಮ್ಮ ಪಾಪಗಳನ್ನು ಅರಿಕೆಮಾಡಿ, ಅವರ ಚಿತ್ತಕ್ಕನುಸಾರ ದೇಶನಿವಾಸಿಗಳನ್ನೂ ಅನ್ಯಜನರಿಂದ ತಂದ ಹೆಂಡತಿಯರನ್ನೂ ಬಿಟ್ಟು ಬೇರೆಯಾಗಿರಿ,” ಎಂದನು.</verse>
				<verse number="12">ಕೂಡಿಬಂದವರೆಲ್ಲರೂ ಗಟ್ಟಿಯಾಗಿ, “ನೀವು ಹೇಳಿದಂತೆಯೇ ಮಾಡುವುದು ನಮ್ಮ ಕರ್ತವ್ಯ.</verse>
				<verse number="13">ಆದರೆ ಕೂಡಿಬಂದಿರುವವರು ಬಹುಮಂದಿ; ಈಗ ಮಳೆಗಾಲ; ಹೊರಗೆ ನಿಲ್ಲುವುದು ಅಸಾಧ್ಯ. ಈ ಕೆಲಸ ಒಂದೆರಡು ದಿನಗಳಲ್ಲಿ ತೀರುವಂಥದಲ್ಲ; ಈ ವಿಷಯದಲ್ಲಿ ನಮ್ಮ ಅಪರಾಧ ದೊಡ್ಡದು.</verse>
				<verse number="14">ಆದುದರಿಂದ ನಮ್ಮ ಮುಂದಾಳುಗಳು ಸರ್ವಸಮೂಹದ ಪರವಾಗಿ ಈ ಕಾರ್ಯವನ್ನು ವಹಿಸಿಕೊಳ್ಳಲಿ; ನಮ್ಮ ನಮ್ಮ ಊರುಗಳಲ್ಲಿ ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರೆಲ್ಲರು, ನೇಮಿತ ದಿನದಲ್ಲಿ, ತಮ್ಮ ಊರಿನ ಹಿರಿಯರೊಡನೆ ಹಾಗು ನ್ಯಾಯಾಧಿಪತಿಗಳೊಡನೆ ಇಲ್ಲಿಗೆ ಬರಲಿ. ನಮ್ಮ ದೇವರು ಈ ವಿಷಯದಲ್ಲಿ ನಮ್ಮ ಬಗ್ಗೆ ತಾಳಿರುವ ಉಗ್ರಕೋಪ ಹೀಗೆ ಪರಿಹಾರವಾಗಲಿ,” ಎಂದು ಉತ್ತರಕೊಟ್ಟರು.</verse>
				<verse number="15">ಅಸಾಹೇಲನ ಮಗ ಯೋನಾತಾನ್, ಹಾಗು ತಿಕ್ವನ ಮಗ ಯಹ್ಜೆಯ ಎಂಬವರು ಮಾತ್ರ. ಈ ಅಭಿಪ್ರಾಯವನ್ನು ವಿರೋಧಿಸಿದರು. ಲೇವಿಯರಾದ ಮೆಷುಲ್ಲಾಮ್, ಶಬ್ಬೆತೈ ಎಂಬವರೂ ಇವರನ್ನು ಬೆಂಬಲಿಸಿದರು.</verse>
				<verse number="16">ಆದರೆ ಸೆರೆಯಿಂದ ಮರಳಿ ಬಂದ ಇತರರು ಮೇಲೆ ಹೇಳಿರುವುದನ್ನೇ ಒಪ್ಪಿಕೊಂಡರು. ಈ ವಿಚಾರಣೆಯನ್ನು ನಡೆಸುವುದಕ್ಕೆ ಯಾಜಕ ಎಜ್ರನೂ ಆಯಾ ಗೋತ್ರಗಳ ಮುಖಂಡರೂ ಹೆಸರು ಹೆಸರಾಗಿ ನೇಮಕಗೊಂಡರು. ಹತ್ತನೆಯ ತಿಂಗಳಿನ ಮೊದಲನೆಯ ದಿನ, ಇವರ ಮೊದಲನೆಯ ಕೂಟ ನಡೆಯಿತು.</verse>
				<verse number="17">ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರ ವಿಷಯವನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನವೇ ಪೂರ್ತಿಯಾಗಿ ವಿಚಾರಿಸಿ ತೀರ್ಮಾನಿಸಿದರು.</verse>
				<verse number="18">ಅನ್ಯಜನರ ಸ್ತ್ರೀಯರನ್ನು ಮದುವೆಮಾಡಿಕೊಂಡವರ ಪಟ್ಟಿ ಇದು: ಯಾಜಕರಲ್ಲಿ: ಯೋಚಾದಾಕನ ಮಗ ಯೆಷೂವನ ಮತ್ತು ಅವನ ಸಹೋದರರ ಸಂತಾನದವರಾದ ಮಾಸೇಯ, ಎಲೀಯೆಜೆರ್, ಯಾರೀಬ್, ಗೆದಲ್ಯ ಎಂಬವರು.</verse>
				<verse number="19">ಇವರು ತಮ್ಮ ಹೆಂಡತಿಯರನ್ನು ಕಳುಹಿಸಿಬಿಡುವುದಾಗಿ ಕೈಮುಟ್ಟಿ ಪ್ರಮಾಣಮಾಡಿದರು; ತಾವು ಅಪರಾಧಿಗಳೆಂದು ಒಪ್ಪಿ ಪ್ರಾಯಶ್ಚಿತ್ತವಾಗಿ ಒಂದು ಟಗರನ್ನು ಸಮರ್ಪಿಸಿದರು.</verse>
				<verse number="20">ಇಮ್ಮೇರನ ಸಂತಾನದವರಾದ ಹನಾನೀ, ಜೆಬದ್ಯ;</verse>
				<verse number="21">ಹಾರೀಮನ ಸಂತಾನದವರಾದ ಮಾಸೇಯ, ಎಲೀಯ, ಶೆಮಾಯ, ಯೆಹೀಯೇಲ್, ಹಾಗು ಉಜ್ಜೀಯ;</verse>
				<verse number="22">ಪಷ್ಹೂರನ ಸಂತಾನದವರಾದ ಎಲ್ಯೋವೇನೈ, ಮಾಸೇಯ, ಇಷ್ಮಾಯೇಲ್, ನೆತನೇಲ್, ಯೋಜಾಬಾದ್ ಹಾಗು ಎಲ್ಲಾಸ;</verse>
				<verse number="23">ಲೇವಿಯರಲ್ಲಿ: ಯೊಜಾಬಾದ್, ಶಿಮ್ಮೀ, ಕೆಲೀಟ ಅನ್ನಿಸಿಕೊಳ್ಳುವ ಕೇಲಾಯ, ಪೆತಹ್ಯ, ಯೆಹೂದ ಹಾಗು ಎಲೀಯೆಜೆರ್.</verse>
				<verse number="24">ಗಾಯಕರಲ್ಲಿ: ಎಲ್ಯಾಷೀಬ್. ದ್ವಾರಪಾಲಕರಲ್ಲಿ: ಶಲ್ಲೂಮ್, ಟೆಲೆಮ್ ಹಾಗು ಊರೀ.</verse>
				<verse number="25">ಬೇರೆ ಇಸ್ರಯೇಲರಲ್ಲಿ: ಪರೋಷ್ ಸಂತಾನದವರಾದ ರಮ್ಯಾಹ, ಇಜ್ಜೀಯ, ಮಲ್ಕೀಯ, ಮಿಯ್ಯಾಮಿನ್, ಎಲ್ಲಾಜಾರ್, ಮಲ್ಕೀಯ ಹಾಗು ಬೆನಾಯ;</verse>
				<verse number="26">ಏಲಾಮ್ ಸಂತಾನದವರಾದ ಮತ್ತನ್ಯ, ಜೆಕರ್ಯ, ಯೆಹೀಯೇಲ್, ಅಬ್ದೀ, ಯೆರೇಮೋತ್ ಹಾಗು ಏಲೀಯ;</verse>
				<verse number="27">ಜತ್ತೂ ಸಂತಾನದವರಾದ ಎಲ್ಯೋವೇನ್ಯೆ, ಎಲ್ಯಾಷೀಬ್, ಮತ್ತನ್ಯ, ಯೆರೇಮೋತ್, ಜಾಬದ್, ಹಾಗು ಅಜೀಜಾ;</verse>
				<verse number="28">ಬೇಬೈ ಸಂತಾನದವರಾದ ಯೆಹೋಹಾನಾನ್, ಹನನ್ಯ, ಜಬ್ಬೈ ಹಾಗು ಅತ್ಲೈ;</verse>
				<verse number="29">ಬಾನೀ ಸಂತಾನದವರಾದ ಮೆಷುಲ್ಲಾಮ್, ಮಲ್ಲೂಕ್, ಅದಾಯ, ಯಾಷೂಬ್, ಶೆಯಾಲ್ ಹಾಗು ರಾಮೋತ್;</verse>
				<verse number="30">ಪಹತ್ ಮೊವಾಬ್ ಸಂತಾನದವರಾದ ಅದ್ನ, ಕೆಲಾಲ್, ಬೆನಾಯ, ಮಾಸೇಯ, ಮತ್ತನ್ಯ, ಬೆಚಲೇಲ್, ಬಿನ್ನೂಯ್ ಹಾಗು ಮನಸ್ಸೆ;</verse>
				<verse number="31">ಹಾರೀಮ್ ಸಂತಾನದವರಾದ ಎಲೀಯೆಜೆರ್, ಇಷೀಯ, ಮಲ್ಕೀಯ, ಶೆಮಾಯ, ಸಿಮೆಯೋನ್,</verse>
				<verse number="32">ಬೆನ್ಯಾಮೀನ್, ಮಲ್ಲೂಕ್ ಹಾಗು ಶಮರ್ಯ;</verse>
				<verse number="33">ಹಾಷುಮ್ ಸಂತಾನದವರಾದ ಮತ್ತೆನೈ, ಮತ್ತತ್ಯ, ಜಾಬಾದ್, ಎಲೀಫೆಲೆಟ್, ಯೆರೇಮೈ, ಮನಸ್ಸೆ ಹಾಗು ಶಿಮ್ಮೀ;</verse>
				<verse number="34">ಬಾನೀ ಸಂತಾನದವರಾದ ಮಾದೈ, ಅಮ್ರಾಮ್,</verse>
				<verse number="35">ಊವೇಲ್, ಬೆನಾಯ, ಬೇದೆಯ, ಕೆಲೂಹು,</verse>
				<verse number="36">ವನ್ಯಾಹ, ಮೆರೇಮೋತ್, ಎಲ್ಯಾಷೀಬ್,</verse>
				<verse number="37">ಮತ್ತನ್ಯ, ಮತ್ತೆನೈ,</verse>
				<verse number="38">ಯಾಸೈ, ಬಾನೀ, ಬಿನ್ನೂಯ್, ಶಿಮ್ಮೀ,</verse>
				<verse number="39">ಶೆಲೆಮ್ಯ, ನಾತಾನ್ ಹಾಗು ಅದಾಯ;</verse>
				<verse number="40">ಮಕ್ನದೆಬೈ, ತಾಷೈ, ಶಾರೈ,</verse>
				<verse number="41">ಅಜರೇಲ್, ಶೆಲೆಮ್ಯ, ಶೆಮರ್ಯ,</verse>
				<verse number="42">ಶಲ್ಲೂಮ್, ಅಮರ್ಯ ಹಾಗು ಜೋಸೆಫ್;</verse>
				<verse number="43">ನೆಬೊ ಸಂತಾನದವರಾದ ಯೆಗೀಯೇಲ್, ಮತ್ತಿತ್ಯ, ಜಾಬಾದ್, ಜೆಬೀನ, ಯದ್ದೈ, ಯೋವೇಲ್ ಹಾಗು ಬೆನಾಯ;</verse>
				<verse number="44">ಇವರೆಲ್ಲರು ಅನ್ಯಕುಲದ ಸ್ತ್ರೀಯರನ್ನು ಮದುವೆ ಮಾಡಿಕೊಂಡವರು. ಕೆಲವರಿಗೆ ಆ ಸ್ತ್ರೀಯರಲ್ಲಿ ಮಕ್ಕಳೂ ಹುಟ್ಟಿದ್ದರು.</verse>
			</chapter>
		</book>
		<book number="16">
			<chapter number="1">
				<verse number="1">ಹಕಲ್ಯನ ಮಗ ನೆಹೆಮೀಯನ ಮಾತುಗಳು: ಇಪ್ಪತ್ತನೆಯ ವರ್ಷದ ಮಾರ್ಗಶಿರ ಮಾಸದಲ್ಲಿ ನಾನು ಶೂಷನ್ ಪಟ್ಟಣದ ಅರಮನೆಯಲ್ಲಿದ್ದೆ.</verse>
				<verse number="2">ಆಗ ನನ್ನ ಸಹೋದರರಲ್ಲಿ ಒಬ್ಬನಾದ ಹನಾನೀಯನು ಹಾಗೂ ಬೇರೆ ಕೆಲವು ಜನರು ಜುದೇಯದಿಂದ ನನ್ನ ಬಳಿಗೆ ಬಂದರು. ಸೆರೆಹೋದವರಿಂದ ತಪ್ಪಿಸಿಕೊಂಡ ಯೆಹೂದ್ಯರ ಮತ್ತು ಜೆರುಸಲೇಮಿನ ಸಮಾಚಾರವನ್ನು ನಾನು ಅವರಲ್ಲಿ ವಿಚಾರಿಸಿದೆ.</verse>
				<verse number="3">ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ. ಜೆರುಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು.</verse>
				<verse number="4">ನಾನು ಈ ಸಮಾಚಾರವನ್ನು ಕೇಳಿದಾಗ ನೆಲಕಚ್ಚಿ ಕುಳಿತು ಅತ್ತೆ; ಹಲವಾರು ದಿನಗಳವರೆಗೆ ಶೋಕಿಸಿದೆ, ಉಪವಾಸವಿದ್ದೆ, ಪರಲೋಕ ದೇವರ ಮುಂದೆ ಪ್ರಾರ್ಥನೆ ಮಾಡುತ್ತಾ ಇದ್ದೆ.</verse>
				<verse number="5">ನನ್ನ ಪ್ರಾರ್ಥನೆಯಲ್ಲಿ, “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿರುವ ಪರಲೋಕದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವರೇ,</verse>
				<verse number="6">ಕೃಪೆಮಾಡಿ ನನಗೆ ಕಿವಿಗೊಡಿ, ಕಟಾಕ್ಷಿಸಿ ನೋಡಿ; ನಿಮ್ಮ ದಾಸನ ಪ್ರಾರ್ಥನೆಯನ್ನು ಆಲಿಸಿ, ನಾನು ಈಗ ಹಗಲಿರುಳೂ ನಿಮ್ಮ ಸನ್ನಿಧಿಯಲ್ಲಿ ನಿಮ್ಮ ದಾಸರಾದ ಇಸ್ರಯೇಲರ ಪರವಾಗಿ ಪ್ರಾರ್ಥಿಸುತ್ತಾ ಇದ್ದೇನೆ; ಅವರು ನಿಮಗೆ ವಿರುದ್ಧ ಮಾಡಿದ ಪಾಪಗಳನ್ನು ಅರಿಕೆಮಡುತ್ತಾ ಇದ್ದೇನೆ; ನಾನೂ ನನ್ನ ಪೂರ್ವಜರೂ ಆ ಪಾಪಗಳಲ್ಲಿ ಪಾಲುಗಾರರು.</verse>
				<verse number="7">ನಾವು ನಿಮಗೆ ದ್ರೋಹಿಗಳಾಗಿ ನಡೆಯುತ್ತಾ ಬಂದೆವು; ನೀವು ನಿಮ್ಮ ದಾಸ ಮೋಶೆಯ ಮುಖಾಂತರ ಕೊಟ್ಟ ಆಜ್ಞಾವಿಧಿನ್ಯಾಯಗಳನ್ನು ನಾವು ಕೈಗೊಳ್ಳಲಿಲ್ಲ.</verse>
				<verse number="8">ನೀವು ಅವನ ಮುಖಾಂತರ, ‘ನೀವು ಅವಿಧೇಯರಾದರೆ ನಿಮ್ಮನ್ನು ಜನಾಂಗಗಳೊಳಗೆ ಚದರಿಸಿಬಿಡುವೆನು;</verse>
				<verse number="9">ನನಗೆ ಅಭಿಮುಖರಾಗಿ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ, ನಿಮ್ಮವರು ಆಕಾಶದ ಕೊನೆಯವರೆಗೆ ಒಯ್ಯಲ್ಪಟ್ಟರೂ ನಾನು ಅವರನ್ನು ಅಲ್ಲಿಂದ ಕೂಡಿಸಿ ನನ್ನ ನಾಮಸ್ಥಾಪನೆಗಾಗಿ ಆರಿಸಿದ ಸ್ಥಳಕ್ಕೆ ಮತ್ತೆ ಬರಮಾಡುವೆನು; ಎಂದು ಹೇಳಿದಿರಲ್ಲವೆ? ಆ ಮಾತನ್ನು ನೆನಪುಮಾಡಿಕೊಳ್ಳಿ. ಸ್ವಾಮೀ,</verse>
				<verse number="10">ಅವರು ನಿಮ್ಮ ದಾಸರು ಹಾಗೂ ನೀವು ನಿಮ್ಮ ಮಹಾಶಕ್ತಿ, ಭುಜಪರಾಕ್ರಮಗಳಿಂದ ವಿಮೋಚಿಸಿದ ನಿಮ್ಮ ಪ್ರಜೆಗಳೂ ಆಗಿರುತ್ತಾರಲ್ಲವೆ?</verse>
				<verse number="11">ಸ್ವಾಮೀ, ಕೃಪೆಮಾಡಿ; ನಿಮ್ಮ ದಾಸನಾದ ನನ್ನ ಪ್ರಾರ್ಥನೆಗೂ ನಿಮ್ಮ ನಾಮಸ್ಮರಣೆಯಲ್ಲಿ ಆನಂದಿಸುವ ನಿಮ್ಮ ಭಕ್ತರ ಪ್ರಾರ್ಥನೆಗೂ ಕಿವಿಗೊಡಿ. ನಿಮ್ಮ ದಾಸನಾದ ನಾನು ಈ ದಿನ ಈ ಮನುಷ್ಯನ ದಯೆಗೆ ಪಾತ್ರನಾಗಿ ಕೃತಾರ್ಥನಾಗುವಂತೆ ಅನುಗ್ರಹಿಸಿ,” ಎಂದು ಬೇಡಿಕೊಂಡೆನು.</verse>
			</chapter>
			<chapter number="2">
				<verse number="1">ನಾನು ರಾಜನ ಪಾನಸೇವಕನಾಗಿದ್ದೆ. ಅರ್ತಷಸ್ತರಾಜನ ಇಪ್ಪತ್ತನೆಯ ವರ್ಷದ ಚೈತ್ರಮಾಸದಲ್ಲಿ, ರಾಜನು ದ್ರಾಕ್ಷಾರಸ ಪಾನಮಾಡುವ ಹೊತ್ತಿನಲ್ಲಿ, ದ್ರಾಕ್ಷಾರಸವನ್ನು ತಂದುಕೊಟ್ಟೆ. ನಾನು ಅವನ ಸನ್ನಿಧಿಯಲ್ಲಿ ಹಿಂದೆ ಎಂದೂ ಖಿನ್ನನಾಗಿರಲಿಲ್ಲ.</verse>
				<verse number="2">ರಾಜ ನನಗೆ, “ನೀನು ಕಳೆಗುಂದಿದವನಾಗಿರುವೆ, ಏಕೆ? ನಿನ್ನ ದೇಹಾರೋಗ್ಯ ಚೆನ್ನಾಗಿದೆಯಲ್ಲವೆ? ಇದಕ್ಕೆ ಮನೋವೇದನೆಯೇ ಹೊರತು ಬೇರೇನೂ ಕಾರಣ ಇರಲಾರದು,” ಎಂದು ಹೇಳಿದ. ನನಗೆ ಮಹಾಭೀತಿಯುಂಟಾಯಿತು.</verse>
				<verse number="3">ನಾನು ರಾಜನಿಗೆ, “ರಾಜಾಧಿರಾಜರು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಹೀಗಿರುವಲ್ಲಿ, ನನ್ನ ಮುಖ ಕಳೆಗುಂದದೆ ಇರಲು ಸಾಧ್ಯವೆ?,” ಎಂದು ಹೇಳಿದೆ.</verse>
				<verse number="4">ಆಗ ರಾಜ, “ನಿನ್ನ ಆಶೆಯೇನು?,” ಎಂದು ಕೇಳಿದನು. ನಾನು ಪರಲೋಕ ದೇವರನ್ನು ಪ್ರಾರ್ಥಿಸಿ, ಅವನಿಗೆ, “ರಾಜರ ಚಿತ್ತವಿರುವುದಾದರೆ,</verse>
				<verse number="5">ಮತ್ತು ತಮ್ಮ ಸೇವಕನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ, ನನ್ನ ಪಿತೃಗಳ ಸಮಾಧಿಗಳಿರುವ ಪಟ್ಟಣವನ್ನು ಮರಳಿ ಕಟ್ಟುವುದಕ್ಕೆ ಜುದೇಯ ನಾಡಿಗೆ ಹೋಗಲು ನನಗೆ ಅಪ್ಪಣೆಯಾಗಬೇಕು,” ಎಂದು ಹೇಳಿದೆ.</verse>
				<verse number="6">ರಾಜರ ಹತ್ತಿರದಲ್ಲೇ ಕುಳಿತುಕೊಂಡಿದ್ದಳು ರಾಣಿ. ರಾಜ, “ಪ್ರಯಾಣಕ್ಕೆ ನಿನಗೆ ಎಷ್ಟುಕಾಲಬೇಕು? ಯಾವಾಗ ಹಿಂದಿರುಗುವೆ,” ಎಂದು ವಿಚಾರಿಸಿದ. ನಾನು ಕಾಲವನ್ನು ಸೂಚಿಸಿದೆ. ಅವನು ಒಪ್ಪಿಕೊಂಡು ಹೋಗಿಬರಲು ಅಪ್ಪಣೆಕೊಟ್ಟ.</verse>
				<verse number="7">ತರುವಾಯ ನಾನು ರಾಜನಿಗೆ, “ನದಿ ಆಚೆಯ ದೇಶಾಧಿಪತಿಗಳು ತಮ್ಮ ಪ್ರಾಂತ್ಯಗಳಲ್ಲಿ ಹಾದು ಜುದೇಯ ನಾಡಿಗೆ ಹೋಗುವುದಕ್ಕೆ ನನಗೆ ಅಪ್ಪಣೆಕೊಡಬೇಕಾಗುತ್ತದೆ.</verse>
				<verse number="8">ರಾಜ ವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳನ್ನೂ ಪಟ್ಟಣದ ಪೌಳಿಗೋಡೆಯನ್ನೂ ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡಬೇಕಾಗುತ್ತದೆ; ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆ. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ ರಾಜನು ಅವುಗಳನ್ನು ನನಗೆ ಕೊಟ್ಟನು.</verse>
				<verse number="9">ಅದೂ ಅಲ್ಲದೆ ನನ್ನನ್ನು ಸಾಗಕಳುಹಿಸುವುದಕ್ಕೆ ಸೇನಾಧಿಪತಿಗಳನ್ನೂ ರಾಹುತರನ್ನೂ ಕಳುಹಿಸಿದನು. ಹೀಗೆ ನಾನು ನದಿಯಾಚೆಯ ದೇಶಾಧಿಪತಿಗಳ ಬಳಿಗೆ ಬಂದು ರಾಜನ ಪತ್ರಗಳನ್ನು ಅವರಿಗೆ ತೋರಿಸಿದೆ.</verse>
				<verse number="10">ಇಸ್ರಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ ಅಮ್ಮೋನ್ ದೇಶದವನಾದ ತೊಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬ ಹೊಟ್ಟೆಕಿಚ್ಚುಪಟ್ಟರು.</verse>
				<verse number="11">ಅನಂತರ ಜೆರುಸಲೇಮಿಗೆ ಬಂದೆ. ಅಲ್ಲಿ ಮೂರು ದಿನಗಳಿದ್ದೆ.</verse>
				<verse number="12">ಆಮೇಲೆ ಜೆರುಸಲೇಮಿಗಾಗಿ ಮಾಡತಕ್ಕ ಕಾರ್ಯದ ಬಗ್ಗೆ ನನ್ನ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಿಸಿದ್ದಾರೆಂದು ಯಾರಿಗೂ ತಿಳಿಸದೆ, ರಾತ್ರಿಯಲ್ಲೆದ್ದು ಕೆಲವು ಜನರನ್ನು ಮಾತ್ರ ಕರೆದುಕೊಂಡು ಹೊರಟೆ. ನನ್ನ ವಾಹನಪಶುವಿನ ಹೊರತು ಬೇರೆ ಯಾವ ಪಶುವೂ ನನ್ನೊಂದಿಗಿರಲಿಲ್ಲ.</verse>
				<verse number="13">ನಾನು ರಾತ್ರಿ ವೇಳೆಯಲ್ಲಿ ಕಣಿವೆಯ ಬಾಗಿಲಿನಿಂದ ಹೊರಟು, ಹಾಳುಬಿದ್ದ ಜೆರುಸಲೇಮಿನ ಗೋಡೆಗಳನ್ನೂ ಬೆಂಕಿಯಿಂದ ಸುಡಲಾಗಿದ್ದ ಅದರ ಬಾಗಿಲುಗಳನ್ನೂ ನೋಡುತ್ತಾ ಹೆಬ್ಬಾವು ಬುಗ್ಗೆಯ ಮಾರ್ಗವಾಗಿ ತಿಪ್ಪೆಬಾಗಿಲಿಗೆ ಹೋದೆ.</verse>
				<verse number="14">ಅಲ್ಲಿಂದ ಬುಗ್ಗೆಬಾಗಿಲನ್ನು ಹಾದು ಅರಸನ ಕೊಳಕ್ಕೆ ಹೋದೆ.</verse>
				<verse number="15">ನನ್ನ ವಾಹನಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿಲ್ಲದ್ದರಿಂದ ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಯನ್ನು ಪರೀಕ್ಷಿಸಿದೆ. ಆಮೇಲೆ ಪುನಃ ಕಣಿವೆಯ ಬಾಗಿಲಿನಿಂದ ಮನೆಗೆ ಬಂದೆ.</verse>
				<verse number="16">ನಾನು ಆವರೆಗೆ ಯೆಹೂದ್ಯರಿಗೂ ಯಾಜಕರಿಗೂ ಶ್ರೀಮಂತರಿಗೂ ಅಧಿಕಾರಿಗಳಿಗೂ ಹಾಗು ಕೆಲಸ ನಡೆಸತಕ್ಕ ಇತರರಿಗೂ ಏನೂ ತಿಳಿಸದೆ ಇದ್ದುದರಿಂದ, ನಾನು ಎಲ್ಲಿ ಹೋಗಿದ್ದೆ, ಏನು ಮಾಡಿದೆ ಎಂಬುದು ಅಧಿಕಾರಿಗಳಿಗೆ ಗೊತ್ತಿರಲಿಲ್ಲ.</verse>
				<verse number="17">ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣಮುಂದಿರುತ್ತದಲ್ಲವೇ? ಜೆರುಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಜೆರುಸಲೇಮಿನ ಗೋಡೆಯನ್ನು ಕಟ್ಟೋಣ, ಹೀಗೆ ಮಾಡಿದರೆ ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ.</verse>
				<verse number="18">ಇದಲ್ಲದೆ, ನನ್ನ ದೇವರ ಕೃಪಾಹಸ್ತ ನನ್ನನ್ನು ಹೇಗೆ ನಡೆಸಿತೆಂಬುದನ್ನೂ ರಾಜನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆ. ಆಗ ಅವರು, “ಬನ್ನಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು.</verse>
				<verse number="19">ಹೋರೋನಿನವನಾದ ಸನ್ಬಲ್ಲಟನೂ ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಯೂ ಅರೇಬಿಯನಾದ ಗೆಷೆಮನೂ ಈ ಸಮಾಚಾರವನ್ನೂ ಕೇಳಿದಾಗ ನಮ್ಮನ್ನು ತಿರಸ್ಕರಿಸಿ ಗೇಲಿಮಾಡಿದರು. “ನೀವು ಇಲ್ಲಿ ಮಾಡುವುದೇನು? ಅರಸನಿಗೆ ವಿರೋಧವಾಗಿ ದಂಗೆ ಏಳಬೇಕೆಂದಿದ್ದೀರೋ?” ಎಂದು ಕೇಳಿದರು.</verse>
				<verse number="20">ನಾನು ಅವರಿಗೆ, “ಪರಲೋಕದೇವರು ನಮಗೆ ಸಫಲತೆಯನ್ನು ಅನುಗ್ರಹಿಸುವರು. ಆದುದರಿಂದ ಅವರ ದಾಸರಾದ ನಾವು ಕೋಟೆಯ ಗೋಡೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದೇವೆ. ನಿಮಗಾದರೋ ಜೆರುಸಲೇಮಿನಲ್ಲಿ ಪಾಲಾಗಲಿ, ಹಕ್ಕಾಗಲಿ, ಸ್ಮಾರಕವಾಗಲಿ ಇರುವುದಿಲ್ಲ,” ಎಂದು ಉತ್ತರಕೊಟ್ಟೆ.</verse>
			</chapter>
			<chapter number="3">
				<verse number="1">ಮಹಾಯಾಜಕನಾದ ಎಲ್ಯಾಷೀಬನೂ ಅವನ ಕುಟುಂಬದ ಯಾಜಕರೂ ಕುರಿಬಾಗಿಲನ್ನು ಕಟ್ಟಿ ಅದನ್ನು ಪ್ರತಿಷ್ಠಿಸಿ ಅದಕ್ಕೆ ಕದಗಳನ್ನು ಇಟ್ಟರು. ಅಲ್ಲಿಂದ ಹಮ್ಮೆಯಾ ಬುರುಜಿನವರೆಗೆ ಗೋಡೆಕಟ್ಟಿ ಅದನ್ನೂ ಪ್ರತಿಷ್ಠಿಸಿದರು. ಅಲ್ಲಿಂದ ಹನನೇಲ್ ಬುರುಜಿನವರೆಗೂ ಕಟ್ಟಿದರು.</verse>
				<verse number="2">ಅಲ್ಲಿಂದ ಆಚೆಗೆ ಕಟ್ಟುತ್ತಿದ್ದವರು ಜೆರಿಕೋವಿನವರು; ಆಚೆಗೆ ಇಮ್ರಿಯ ಮಗನಾದ ಜಕ್ಕೂರನು.</verse>
				<verse number="3">ಮೀನುಬಾಗಿಲನ್ನು ಕಟ್ಟಿದವರು ಹಸ್ಸೆನಾಹನ ಮನೆಯವರು. ಇವರು ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿದರು.</verse>
				<verse number="4">ಅಲ್ಲಿಂದ ಮುಂದಕ್ಕೆ ಗೋಡೆಯನ್ನು ದುರಸ್ತಿಮಾಡಿಸಿದವನು ಊರೀಯನ ಮಗನೂ ಹಕ್ಕೋಚನ ಮೊಮ್ಮಗನೂ ಆಗಿರುವ ಮೆರೇಮೋತ್; ಆಮೇಲೆ ಬೆರೆಕ್ಯನ ಮಗನೂ ಮೆಷೇಜಬೇಲನ ಮೊಮ್ಮಗನೂ ಆಗಿರುವ ಮೆಷುಲ್ಲಾಮ್; ಆಚೆಗೆ ಬಾನನ ಮಗ ಚಾದೋಕ್; ಮುಂದಕ್ಕೆ ತೆಕೋವದವರು.</verse>
				<verse number="5">ತೆಕೋವದ ಶ್ರೀಮಂತರಾದರೋ ತಮ್ಮ ಒಡೆಯರ ಸೇವೆಗಾಗಿ ಹೆಗಲನ್ನು ಕೊಡಲಿಲ್ಲ.</verse>
				<verse number="6">ಹಳೆಯದು ಎಂಬ ಬಾಗಿಲನ್ನು ದುರಸ್ತಿಮಾಡಿದವರು ಪಾಸೇಹನ ಮಗ ಯೋಯಾದನು ಹಾಗು ಬೆಸೋದ್ಯನ ಮಗ ಮೆಷುಲ್ಲಾಮನು. ಇವರು ಅದರ ಮೇಲೆ ತೊಲೆಗಳನ್ನಿಟ್ಟು ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿದರು.</verse>
				<verse number="7">ಅಲ್ಲಿಂದ ನದಿಯಾಚೆಯ ರಾಜ್ಯಪಾಲನ ನ್ಯಾಯಸ್ಥಾನದವರೆಗೆ ಗಿಬ್ಯೋನಿನವನಾದ ಮೆಲೆಟ್ಯ, ಮೇರೋನೋತಿನವನಾದ ಯಾದೋನ್ ಇವರೂ ಗಿಬ್ಯೋನ್ ಮತ್ತು ಮಿಚ್ಚ ಊರುಗಳವರು ದುರಸ್ತಿಮಾಡಿದರು.</verse>
				<verse number="8">ಇವರ ಆಚೆಗೆ ಹರ್ಹಯನ ಮಗನಾದ ಅಕ್ಕಸಾಲಿಗರ ಉಜ್ಜೀಯೇಲ್; ಆಮೇಲೆ ಬುಕ್ಕಿಟ್ಟುಗಾರರ ಹನನ್ಯ; ಇವರು ಅಗಲಗೋಡೆಯೆನಿಸಿಕೊಳ್ಳುವ ಗೋಡೆಯ ಆಚೆಗಿರುವ ಜೆರುಸಲೇಮಿನ ಭಾಗವನ್ನು ಗೋಡೆಯೊಳಗೆ ಸೇರಿಸಲಿಲ್ಲ.</verse>
				<verse number="9">ಇದರ ಆಚೆಗೆ ಜೆರುಸಲೇಮಿನ ಅರೆನಾಡೊಡೆಯನೂ ಹೂರನ ಮಗನೂ ಆದ ರೆಫಾಯ.</verse>
				<verse number="10">ಇವನ ಮುಂದಕ್ಕೆ ಹರೂಮಫನ ಮಗ ಯೆದಾಯ; ಇವನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ದುರಸ್ತಿಮಾಡಿದನು. ಇವನ ಆಚೆಗೆ ಹಷಬ್ನೇಯನ ಮಗ ಹಟ್ಟೂಷ್,</verse>
				<verse number="11">ಗೋಡೆಯ ಇನ್ನೊಂದು ಭಾಗವನ್ನೂ ಒಲೆಬುರುಜನ್ನೂ ಸರಿಪಡಿಸಿದವರು ಹಾರೀಮನ ಮಗ ಮಲ್ಕೀಯನು ಹಾಗು ಪಹತ್ ಮೋವಾಬ್ಯನಾದ ಹಷೂಬನು.</verse>
				<verse number="12">ಇವನ ಸಮೀಪದಲ್ಲಿ ಗೋಡೆಯನ್ನು ದುರಸ್ತುಮಾಡಿದವರು ಜೆರುಸಲೇಮಿನ ಅರೆನಾಡೊಡೆಯನೂ ಹಲ್ಲೊಹೇಷನ ಮಗನೂ ಆದ ಶಲ್ಲೂಮನು ಹಾಗು ಅವನ ಕುಮಾರಿಯರು.</verse>
				<verse number="13">ಕಣಿವೆಯ ಬಾಗಿಲನ್ನು ಸರಿಪಡಿಸಿದವರು ಹಾನೂನನು ಹಾಗು ಜಾನೋಹ ಊರಿನವರು. ಇವರು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿ ಅಲ್ಲಿಂದ ತಿಪ್ಪೆಬಾಗಿಲಿನವರೆಗೂ ಸಾವಿರ ಮೊಳದ ಗೋಡೆಯನ್ನು ಕಟ್ಟಿದರು.</verse>
				<verse number="14">ತಿಪ್ಪೆಬಾಗಿಲನ್ನು ಸರಿಪಡಿಸಿದವನು ಬೇತಹಕ್ಕೆರೆಮಿನ ನಾಡೊಡೆಯನೂ ರೇಕಾಬನ ಮಗನೂ ಆದ ಮಲ್ಕೀಯನು; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿದನು.</verse>
				<verse number="15">ಬುಗ್ಗೆಬಾಗಿಲನ್ನು ದುರಸ್ತಿಪಡಿಸಿದವನು ಮಿಚ್ಪದ ನಾಡೊಡೆಯನೂ ಕೊಲ್ಹೋಜೆಯ ಮಗನೂ ಆದ ಶಲ್ಲೂನ್; ಇವನು ಅದರ ಗೋಡೆಯನ್ನು ಕಟ್ಟಿ ಅದಕ್ಕೆ ಮಾಳಿಗೆಯನ್ನು ಹಾಕಿ, ಕದ, ತಿರುಗಣಿ, ಅಗುಳಿಗಳನ್ನು ಹಚ್ಚಿ ದಾವೀದನಗರದಿಂದಿಳಿದು ಬರುವ ಸೋಪಾನಗಳ ಈಚೆ, ಅರಸನ ತೋಟದ ಬಳಿಯಲ್ಲಿರುವ ಶಿಲೋವ ಕೊಳದ ಗೋಡೆಯನ್ನು ಕಟ್ಟಿದನು.</verse>
				<verse number="16">ಇವನ ಆಚೆ ಅಂದರೆ, ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ, ಇವುಗಳವರೆಗೂ ದುರಸ್ತುಮಾಡಿದವನು ಬೇತ್ಚೂರಿನ ಅರೆನಾಡೊಡೆಯನೂ ಅಜ್ಬೂಕನ ಮಗನೂ ಆದ ನೆಹೆಮೀಯನು.</verse>
				<verse number="17">ಇವನ ಆಚೆ ದುರಸ್ತಿಕಾರ್ಯವನ್ನು ಕೈಗೊಂಡವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್, ಇವನ ಸಮೀಪದಲ್ಲಿ ತನ್ನ ನಾಡಿನವರೊಡನೆ ಕಟ್ಟುತ್ತಿದ್ದ ಕೆಯೀಲದ ಅರೆನಾಡೊಡೆಯನಾದ ಹಷಬ್ಯ ಇವರು.</verse>
				<verse number="18">ಇವರ ಆಚೆ, ಇವರ ಬಂಧುಗಳಲ್ಲಿ ಕೆಯೀಲದ ಎರಡನೆಯ ಅರೆನಾಡೊಡೆಯನೂ ಹೇನಾದಾದನ ಮಗನೂ ಆದ ಬಲ್ವೈ.</verse>
				<verse number="19">ಇವನ ಸಮೀಪದಲ್ಲಿ ಗೋಡೆಯ ಇನ್ನೊಂದು ಭಾಗವನ್ನು ಅಂದರೆ, ಗೋಡೆಯ ಮೂಲೆಯಲ್ಲಿರುವ ಆಯುಧಶಾಲೆಗೆ ಹೋಗುವ ಮೆಟ್ಟಲುಗಳ ಎದುರಿಗಿರುವ ಭಾಗವನ್ನು ಮಿಚ್ಪದ ಅಧಿಕಾರಿಯೂ ಯೇಷೂವನ ಮಗನೂ ಆದ ಏಜೆರನು ಸರಿಪಡಿಸಿದನು.</verse>
				<verse number="20">ಇವನ ಆಚೆ, ಗೋಡೆಯ ಇನ್ನೊಂದು ಭಾಗವನ್ನು ಅಂದರೆ, ಮೂಲೆಯಿಂದ ಮಹಾಯಾಜಕನಾದ ಎಲ್ಯಾಷೀಬನ ಮನೆಯ ಬಾಗಿಲಿನವರೆಗೆ, ಜಕ್ಕೈಯ ಮಗನಾದ ಬಾರೂಕನು ಆಸಕ್ತಿ ಇಂದ ಭದ್ರಪಡಿಸಿದನು.</verse>
				<verse number="21">ಇವನ ಆಚೆ, ಗೋಡೆಯ ಇನ್ನೊಂದು ಭಾಗವನ್ನು ಅಂದರೆ, ಎಲ್ಯಾಷೀಬನ ಮನೆಯ ಬಾಗಿಲಿನಿಂದ ಅದೇ ಮನೆಯ ಕೊನೆಯವರೆಗೆ, ಹಕ್ಕೋಚನ ಮೊಮ್ಮಗನೂ ಊರೀಯನ ಮಗನೂ ಆದ ಮೆರೇಮೋತನು ದುರಸ್ತಿಮಾಡಿಸಿದನು.</verse>
				<verse number="22">ಮುಂದಿನ ಭಾಗವನ್ನು ಕಟ್ಟಿದವರು ಜೋರ್ಡನ್ ನದಿಯ ಕಣಿವೆಯಲ್ಲಿ ವಾಸಿಸುತ್ತಿದ್ದ ಯಾಜಕರು.</verse>
				<verse number="23">ಇವರ ಆಚೆ, ಬೆನ್ಯಾಮೀನ್ ಹಷೂಬರು; ಇವರು ತಮ್ಮ ತಮ್ಮ ಮನೆಗಳಿಗೆ ಎದುರಾಗಿರುವ ಗೋಡೆಯನ್ನು ದುರಸ್ತಿಮಾಡಿಸಿದರು. ಇವರ ಆಚೆ, ಅನನ್ಯನ ಮೊಮ್ಮಗನೂ ಮಾಸೇಯನ ಮಗನೂ ಆದ ಅಜರ್ಯ: ಇವನು ತನ್ನ ಮನೆಯ ಹತ್ತಿರದಲ್ಲಿರುವ ಗೋಡೆಯನ್ನು ಸರಿಪಡಿಸಿದನು.</verse>
				<verse number="24">ಇವನ ಆಚೆ, ಅಜರ್ಯನ ಮನೆಯಿಂದ ಮೂಲೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ದುರಸ್ತಿಮಾಡಿದವನು ಹೇನಾದಾದನ ಮಗನಾದ ಬಿನ್ನೂಯ್.</verse>
				<verse number="25">ಸೆರೆಮನೆಯ ಅಂಗಳದ ಹತ್ತಿರ ಮೇಲಣ ಅರಮನೆಯ ಗೋಡೆಯನ್ನು ಮೀರಿ ಬರುವ ಮೂಲೆಬುರುಜಿನ ಎದುರಿನ ಭಾಗವನ್ನು ಊಜೈಯ ಮಗ ಪಾಲಾಲನೂ ಇವನ ಆಚೆಯಲ್ಲಿ ಪರೋಷನ ಮಗ ಪೆದಾಯನೂ ಸರಿಪಡಿಸಿದರು.</verse>
				<verse number="26">ಆ ಮೂಲೆಬುರುಜಿನ ಮತ್ತು ನೀರುಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಸ್ಥಾನ ಪರಿಚಾರಕರ ನಿವಾಸಸ್ಥಾನ.</verse>
				<verse number="27">ಆ ದೊಡ್ಡ ಮೂಲೆಬುರುಜಿನ ಎದುರಿನಿಂದ ಓಫೇಲ್ ಗೋಡೆಯವರೆಗಿರುವ ಗೋಡೆಯ ಇನ್ನೊಂದು ಭಾಗವನ್ನು ತೆಕೋವದವರು ದುರಸ್ತಿಮಾಡಿದರು.</verse>
				<verse number="28">ಯಾಜಕರು ಕುದುರೆಬಾಗಿಲಿನ ಆಚೆ ದಿಣ್ಣೆಯ ಮೇಲಿರುವ ಗೋಡೆಯಲ್ಲಿ ತಮ್ಮ ತಮ್ಮ ಮನೆಗಳ ಎದುರಿನ ಭಾಗಗಳನ್ನು ಸರಿಮಾಡಿದರು.</verse>
				<verse number="29">ಇವರ ಆಚೆ, ಇಮ್ಮೇರನ ಮಗ ಚಾದೋಕನು ತನ್ನ ಮನೆಯ ಎದುರಿಗಿರುವ ಗೋಡೆಯನ್ನು ದುರಸ್ತಿಮಾಡಿದನು. ಇವನ ಆಚೆ, ಪೂರ್ವದಿಕ್ಕಿನ ದ್ವಾರಪಾಲಕನಾದ ಶೆಕನ್ಯನ ಮಗ ಶೆಮಾಯನು.</verse>
				<verse number="30">ಇವನ ಆಚೆ ಶೆಲೆಮ್ಯನ ಮಗನಾದ ಹನನ್ಯ; ಗೋಡೆಯ ಇನ್ನೊಂದು ಭಾಗವನ್ನು ಸರಿಮಾಡಿದವನು ಚಾಲಫನ ಆರನೆಯ ಮಗನಾದ ಹಾನೂನ್; ಇವನ ಆಚೆ, ಅಂದರೆ ತನ್ನ ಸ್ವಂತ ಕೊಠಡಿಯ ಮುಂದೆ ಬೆರೆಕ್ಯನ ಮಗನಾದ ಮೆಷುಲ್ಲಾಮ್.</verse>
				<verse number="31">ಇನ್ನೂ ಮುಂದಕ್ಕೆ ಅಕ್ಕಸಾಲಿಗರ ಮಲ್ಕೀಯ; ಇವನು ದಂಡುಕೂಡುವ ಬಾಗಿಲಿನ ಎದುರಿನಲ್ಲಿರುವ ದೇವಸ್ಥಾನ ಪರಿಚಾರಕರ ಮತ್ತು ವರ್ತಕರ ಕೇರಿಯವರೆಗೂ ಮೂಲೆಯುಪ್ಪರಿಗೆಯವರೆಗೂ ದುರಸ್ತಿಮಾಡಿದನು.</verse>
				<verse number="32">ಈ ಮೂಲೆಯುಪ್ಪರಿಗೆಗೂ ಕುರಿಬಾಗಿಲಿಗೂ ನಡುವೆಯಿದ್ದ ಗೋಡೆಯನ್ನು ಸರಿಮಾಡಿದವರು ಅಕ್ಕಸಾಲಿಗರು ಹಾಗು ವರ್ತಕರು.</verse>
			</chapter>
			<chapter number="4">
				<verse number="1">ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿ ಸನ್ಬಲ್ಲಟನಿಗೆ ಮುಟ್ಟಿತು. ಅವನು ಬಹಳ ಹೊಟ್ಟೆಕಿಚ್ಚಿನ ಹಾಗು ಸಿಡುಕಿನ ವ್ಯಕ್ತಿ.</verse>
				<verse number="2">“ನನ್ನ ಸಹೋದರರ ಮುಂದೆ ಹಾಗು ಸಮಾರಿಯದ ದಂಡಿನವರ ಮುಂದೆ ಅಶಕ್ತರಾದ ಈ ಯೆಹೂದ್ಯರು ಮಾಡುವುದಾದರೂ ಏನು? ಇವರು ತಮ್ಮನ್ನೇ ಬಲಪಡಿಸಿಕೊಳ್ಳಬೇಕೆಂದು ಇರುವರೋ? ಬಲಿಯರ್ಪಿಸುವರೋ? ಈ ದಿನವೇ ಈ ಕೆಲಸವನ್ನು ಮಾಡಿಮುಗಿಸುವರೋ? ಸುಟ್ಟುಹೋದ ಪಟ್ಟಣದ ಬೂದಿಯ ರಾಶಿಯೊಳಗೆ ಹುದುಗಿಹೋದ ಕಲ್ಲುಗಳನ್ನು ಬದುಕಿಸುವರೋ?’ ಎಂದು ಹೇಳಿ ಯೆಹೂದ್ಯರನ್ನು ಪರಿಹಾಸ್ಯ ಮಾಡಿದನು.</verse>
				<verse number="3">ಅವನ ಬಳಿಯಲ್ಲೇ ನಿಂತಿದ್ದ ಅಮ್ಮೋನಿಯನಾದ ಟೋಬೀಯನು, “ಅವರು ಕಟ್ಟುವ ಕಲ್ಲು ಗೋಡೆಯ ಮೇಲೆ ನರಿ ಹಾರಿದರೆ ಅದು ಬಿದ್ದುಹೋಗುವುದು!” ಎಂದು ಅಣಕಿಸಿದನು.</verse>
				<verse number="4">“ನಮ್ಮ ದೇವರೇ ಆಲಿಸಿ: ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಾರೆ! ಈ ನಿಂದೆಯನ್ನು ಅವರ ತಲೆಯ ಮೇಲೆಯೇ ಬರಮಾಡಿ. ಅವರು ದೇಶಭ್ರಷ್ಟರಾಗಿ ಸೂರೆಹೋಗುವಂತೆ ಮಾಡಿ.</verse>
				<verse number="5">ಅವರ ಅಪರಾಧವನ್ನು ಕ್ಷಮಿಸಬೇಡಿ. ನಿಮ್ಮೆದುರಿಗಿರುವ ಅವರ ಪಾಪವನ್ನು ಅಳಿಸಿಬಿಡಬೇಡಿ. ಏಕೆಂದರೆ ಕಟ್ಟುವವರ ಮುಂದೆಯೇ ಅವರು ನಿಮ್ಮನ್ನು ಕೆಣಕಿದ್ದಾರೆ,” ಎಂದು ನಾನು ಪ್ರಾರ್ಥಿಸಿದೆ.</verse>
				<verse number="6">ಇದಾದ ಮೇಲೆ ನಾವು ಕಟ್ಟುವ ಕೆಲಸವನ್ನು ಮುಂದುವರಿಸಿದೆವು. ಜನರು ಮನಸ್ಸುಮಾಡಿ ಅರ್ಧಗೋಡೆಯನ್ನು ಕಟ್ಟಿದರು.</verse>
				<verse number="7">ಸನ್ಬಲ್ಲಟನು, ಟೋಬೀಯನು, ಅರೇಬಿಯರು, ಅಮ್ಮೋನಿಯರು ಹಾಗು ಅಷ್ಡೋದಿನವರು ಜೆರುಸಲೇಮಿನ ಗೋಡೆಯ ದುರಸ್ತಿಕಾರ್ಯ ಮುಂದುವರಿದಿದೆ ಹಾಗು ಅದರ ಸಂದುಗಳು ಮತ್ತೆ ಮುಚ್ಚಿಕೊಳ್ಳುತ್ತಿವೆ ಎಂಬುದನ್ನು ಕೇಳಿದರು.</verse>
				<verse number="8">ಅವರಿಗೆ ಬಹುಕೋಪ ಬಂದಿತು. “ನಾವು ಒಟ್ಟಾಗಿ ಜೆರುಸಲೇಮಿನವರ ವಿರುದ್ಧ ಯುದ್ಧಕ್ಕೆ ಹೋಗಿ ಅವರನ್ನು ತಳಮಳಗೊಳಿಸೋಣ,” ಎಂದು ಒಳಸಂಚು ಮಾಡಿಕೊಂಡರು.</verse>
				<verse number="9">ನಾವಾದರೋ ನಮ್ಮ ದೇವರಿಗೆ ಮೊರೆಯಿಟ್ಟು ಆ ಜನರು ಬರುವ ದಾರಿಯಲ್ಲಿ ಹಗಲಿರುಳು ಕಾವಲಿಟ್ಟೆವು.</verse>
				<verse number="10">ಇತ್ತ ಯೆಹೂದ್ಯರೇ, “ಹೊರೆಹೊರುವವರ ಬಲ ಕುಂದಿಹೋಯಿತು. ಧೂಳಿನ ರಾಶಿ ವಿಪರೀತ ಆಗಿದೆ; ಈ ಗೋಡೆಯನ್ನು ಕಟ್ಟುವುದು ನಮ್ಮಿಂದಾಗದು,” ಎಂದರು.</verse>
				<verse number="11">ಅತ್ತ ನಮ್ಮ ವಿರೋಧಿಗಳು, “ಅವರಿಗೆ ತಿಳಿಯದೆ, ಗೋಚರವಾಗದೆ, ಫಕ್ಕನೆ ಅವರೊಳಗೆ ನುಗ್ಗಿ ಅವರನ್ನು ಕೊಂದು ಕೆಲಸವನ್ನು ನಿಲ್ಲಿಸಿಬಿಡೋಣ,” ಎಂದುಕೊಳ್ಳುತ್ತಿದ್ದರು.</verse>
				<verse number="12">ಅವರ ನೆರೆಯೂರುಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರು ಬಂದು, “ನೀವು ಯಾವ ಕಡೆಗೆ ತಿರುಗಿಕೊಂಡರೂ ಆ ಎಲ್ಲಾ ಕಡೆಗಳಿಂದ ನಮಗೆ ವಿರೋಧವಾಗಿ ಯುದ್ಧಕ್ಕೆ ಬರುತ್ತಾರೆ,” ಎಂದು ಪದೇ ಪದೇ ತಿಳಿಸುತ್ತಿದ್ದರು.</verse>
				<verse number="13">ಆಗ ನಾನು ಜನರಿಗೆ, “ಕತ್ತಿ, ಬಿಲ್ಲು, ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬಯಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಿ,” ಎಂದು ಆಜ್ಞಾಪಿಸಿದೆ.</verse>
				<verse number="14">ಅವರನ್ನು ಸಂದರ್ಶಿಸಿ, ಅವರ ಮುಂದೆ ನಿಂತು, ಶ್ರೀಮಂತರನ್ನೂ ಅಧಿಕಾರಿಗಳನ್ನೂ ಉಳಿದ ಜನರನ್ನೂ ಸಂಬೋಧಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿ; ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ಸರ್ವೇಶ್ವರಸ್ವಾಮಿಯನ್ನು ಸ್ಮರಿಸಿಕೊಂಡು, ನಿಮ್ಮ ಸಹೋದರರಿಗಾಗಿ, ಮಡದಿಮಕ್ಕಳಿಗಾಗಿ ಹಾಗು ನಿಮ್ಮ ಮನೆಮಠಗಳಿಗಾಗಿ ಕಾದಾಡಿರಿ,” ಎಂದು ಹುರಿದುಂಬಿಸಿದೆ.</verse>
				<verse number="15">ನಮ್ಮ ಶತ್ರುಗಳು ತಮ್ಮ ಹಂಚಿಕೆ ನಮಗೆ ಗೊತ್ತಾಯಿತೆಂದೂ ದೇವರು ಅದನ್ನು ವ್ಯರ್ಥಮಾಡಿದರೆಂದೂ ತಿಳಿದುಕೊಂಡರು. ನಮ್ಮನ್ನು ಬಿಟ್ಟುಹೋದರು; ನಾವೆಲ್ಲರು ನಮ್ಮ ನಮ್ಮ ಗೋಡೆಯ ಕೆಲಸಕ್ಕೆ ಮತ್ತೆ ಕೈಹಾಕಿದೆವು.</verse>
				<verse number="16">ಅಂದಿನಿಂದ ನನ್ನ ಸ್ವಂತ ಆಳುಗಳಲ್ಲಿ ಅರ್ಧಮಂದಿ ಕಟ್ಟಡ ಕೆಲಸದಲ್ಲಿ ನಿರತರಾದರು. ಅರ್ಧಮಂದಿ ಕವಚವನ್ನು ಧರಿಸಿಕೊಂಡು ಬರ್ಜಿ, ಗುರಾಣಿ, ಬಿಲ್ಲುಗಳನ್ನು ಹಿಡಿದುಕೊಂಡು ನಿಂತರು. ಅದೇ ಪ್ರಕಾರ ಅಧಿಕಾರಿಗಳೂ ಗೋಡೆ ಕಟ್ಟುವ ಯೆಹೂದ್ಯರ ಹಿಂದೆ ನಿಂತರು.</verse>
				<verse number="17">ಹೊರೆಹೊರುವವರೂ ಒಂದು ಕೈಯಿಂದ ಹೊರೆಹೊತ್ತು ಇನ್ನೊಂದು ಕೈಯಿಂದ ಈಟಿ ಹಿಡಿದುಕೊಳ್ಳುತ್ತ ಇದ್ದರು.</verse>
				<verse number="18">ಕಟ್ಟುವವರಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಕತ್ತಿಯನ್ನು ಸೊಂಟಕ್ಕೆ ಬಿಗಿದುಕೊಳ್ಳುತ್ತ ಇದ್ದನು. ನಾನಂತೂ ಕಹಳೆ ಊದುವವನೊಬ್ಬನನ್ನು ನನ್ನ ಬಳಿಯಲ್ಲೇ ಇರಿಸಿಕೊಂಡಿದ್ದೆ.</verse>
				<verse number="19">ಶ್ರೀಮಂತರಿಗು, ಅಧಿಕಾರಿಗಳಿಗು ಹಾಗು ಉಳಿದ ಜನರಿಗು, “ನಾವು ಮಾಡುವ ಕೆಲಸ ದೊಡ್ಡದು, ಹಲವಾರು ಎಡೆಗಳಲ್ಲಿ ನಡೆಯುವಂಥದ್ದು; ನಾವು ಗೋಡೆಯ ನಿಮಿತ್ತ ಒಬ್ಬರಿಂದ ಒಬ್ಬರು ದೂರವಾಗಿರುತ್ತೇವೆ.</verse>
				<verse number="20">ನಿಮಗೆ ಕಹಳೆಯ ಧ್ವನಿ ಕೇಳಿದಕೂಡಲೆ, ನಮ್ಮ ಬಳಿಗೆ ಕೂಡಿಬನ್ನಿರಿ. ನಮ್ಮ ದೇವರು ನಮ್ಮ ಪರವಾಗಿ ಯುದ್ಧಮಾಡುವರು,” ಎಂದು ಹೇಳಿದ್ದೆ.</verse>
				<verse number="21">ಹೀಗೆ ನಾವು ಅರುಣೋದಯದಿಂದ ನಕ್ಷತ್ರಗಳು ಮೂಡುವವರೆಗೂ ಕೆಲಸಮಾಡುತ್ತಿದ್ದೆವು; ನನ್ನ ಸೇವಕರಲ್ಲಿ ಅರ್ಧಮಂದಿ ಬರ್ಜಿ ಹಿಡಿದುಕೊಂಡಿದ್ದರು.</verse>
				<verse number="22">ಇದಲ್ಲದೆ, ನಾನು ಮೇಸ್ತ್ರಿಗಳಿಗೆ, “ನಿಮ್ಮ ಆಳುಗಳು ರಾತ್ರಿಯಲ್ಲಿ ನಮಗೆ ಕಾವಲಾಗಿರಲು ಹಾಗು ಹಗಲಿನಲ್ಲಿ ಕೆಲಸಮಾಡಲು ಸಾಧ್ಯವಾಗುವಂತೆ, ನೀವು ನಿಮ್ಮ ನಿಮ್ಮ ಆಳುಗಳೊಡನೆ ಜೆರುಸಲೇಮಿನಲ್ಲೇ ವಾಸಮಾಡಬೇಕು,” ಎಂದು ಅಪ್ಪಣೆಮಾಡಿದ್ದೆ.</verse>
				<verse number="23">ನಾನು, ನನ್ನ ಸಹೋದರರು, ಸೇವಕರು ಹಾಗು ಮೈಗಾವಲಿನವರು ಸ್ನಾನ ಸಮಯದಲ್ಲಿ ಹೊರತು, ಬೇರೆ ಸಮಯದಲ್ಲಿ ನಮ್ಮ ಬಟ್ಟೆಗಳನ್ನು ತೆಗೆದುಹಾಕುತ್ತಿರಲಿಲ್ಲ.</verse>
			</chapter>
			<chapter number="5">
				<verse number="1">ಕೆಲವು ದಿನಗಳ ನಂತರ ಜನಸಾಮಾನ್ಯರು ಹಾಗು ಅವರ ಹೆಂಡತಿಯರು ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧ ಕಟುವಾಗಿ ಗುಣುಗುಟ್ಟತೊಡಗಿದರು.</verse>
				<verse number="2">ಕೆಲವರು, “ನಮಗೆ ಗಂಡುಹೆಣ್ಣು ಮಕ್ಕಳು ಬಹುಮಂದಿ ಇದ್ದಾರೆ; ನಮ್ಮ ಜೀವನಕ್ಕಾಗಿ ಕಾಳುಕಡ್ಡಿಗಳನ್ನು ಹೇಗಾದರೂ ಸಂಪಾದಿಸಿಕೊಳ್ಳಬೇಕಾಗಿ ಇದೆ,” ಎಂದರು.</verse>
				<verse number="3">ಇನ್ನು ಕೆಲವರು, “ನಮ್ಮ ಹೊಲ, ತೋಟ, ಮನೆಗಳನ್ನು ಅಡವು ಇಟ್ಟಾಯಿತು; ಹಾಗೆ ಮಾಡಿಯಾದರೂ ಈ ಬರಗಾಲದಲ್ಲಿ ಧಾನ್ಯವನ್ನು ಸಂಪಾದಿಸಿಕೊಳ್ಳಬೇಕಾಗಿದೆ,” ಎಂದರು.</verse>
				<verse number="4">ಮತ್ತೆ ಕೆಲವರು “ಸರಕಾರಕ್ಕೆ ಕಂದಾಯ ಕೊಡುವುದಕ್ಕಾಗಿ ನಮ್ಮ ಹೊಲ, ತೋಟಗಳ ಮೇಲೆ ಸಾಲ ತೆಗೆದುಕೊಳ್ಳಬೇಕಾಯಿತು;</verse>
				<verse number="5">ಆ ನಮ್ಮ ಸಹೋದರರ ಕುಲಕ್ಕೂ ನಮ್ಮ ಕುಲಕ್ಕೂ ಅವರ ಮಕ್ಕಳಿಗೂ ನಮ್ಮ ಮಕ್ಕಳಿಗೂ ಏನು ಹೆಚ್ಚುಕಡಿಮೆ? ನೋಡಿ, ನಾವು ನಮ್ಮ ಗಂಡುಹೆಣ್ಣು ಮಕ್ಕಳನ್ನು ಪರರಿಗೆ ದಾಸರನ್ನಾಗಿ ಕೊಡಬೇಕಾಯಿತು; ನಮ್ಮ ಹೆಣ್ಣುಮಕ್ಕಳಲ್ಲಿ ಕೆಲವರನ್ನು ಈಗಾಗಲೇ ಅಪಹರಿಸಿದ್ದಾರೆ; ನಮ್ಮ ಪ್ರಯತ್ನವೇನೂ ಸಾಗುವುದಿಲ್ಲ; ನಮ್ಮ ಹೊಲತೋಟಗಳು ಪರಾಧೀನವಾಗಿವೆ,” ಎಂದು ಎಲ್ಲಾ ಗೊಣಗಿದರು.</verse>
				<verse number="6">ಅವರ ಬೊಬ್ಬೆಯನ್ನೂ ಟೀಕೆಗಳನ್ನೂ ಕೇಳಿ ನನಗೆ ಬಹಳ ಸಿಟ್ಟು ಬಂದಿತು.</verse>
				<verse number="7">ನಾನು ತುಸು ಆಲೋಚಿಸಿ ನೋಡಿದೆ. ಬಳಿಕ ಶ್ರೀಮಂತರನ್ನೂ ಅಧಿಕಾರಿಗಳನ್ನೂ ಖಂಡಿಸಿ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದು ಸರಿಯೆ?” ಎಂದು ಹೇಳಿ ಅವರೊಡನೆ ಬಹಳವಾಗಿ ವಾಗ್ವಾದಿಸಿ ಅವರಿಗೆ ವಿರೋಧವಾಗಿ ಮಹಾಸಭೆಯನ್ನು ಕೂಡಿಸಿದೆ.</verse>
				<verse number="8">“ನಾವು ನಮ್ಮಿಂದ ಆಗುವಷ್ಟು ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲಾದವರನ್ನು, ಹಣಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನೇ ಮಾರಿಬಿಡುತ್ತಿದ್ದೀರಿ; ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು?” ಎನ್ನಲು ಅವರು ಉತ್ತರಕೊಡದೆ ಸುಮ್ಮನೆ ಇದ್ದರು.</verse>
				<verse number="9">ಆಮೇಲೆ ನಾನು ಅವರಿಗೆ, “ನೀವು ಮಾಡಿದ್ದು ಸರಿಯಲ್ಲ; ನಾವು ನಮ್ಮ ವಿರೋಧಿಗಳಾದ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ?</verse>
				<verse number="10">ನಾನು, ನನ್ನ ಸಹೋದರರು, ಸೇವಕರು ಸಹ, ಅವರಿಗೆ ಹಣವನ್ನೂ ಧಾನ್ಯವನ್ನೂ ಬಡ್ಡಿಗೆ ಕೊಟ್ಟಿದ್ದೇವೆ. ಬಡ್ಡಿ ತೆಗೆದುಕೊಳ್ಳುವ ಪದ್ಧತಿಯನ್ನು ಬಿಟ್ಟುಬಿಡೋಣ.</verse>
				<verse number="11">ಅವರ ಹೊಲ, ದ್ರಾಕ್ಷೀತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನು ಹಿಂದಕ್ಕೆ ಕೊಟ್ಟುಬಿಡಿ. ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೆ ಶೇಕಡಾ ಇಷ್ಟೆಂದು ವಸೂಲಿಮಾಡುವ ಹಕ್ಕನ್ನೂ ಕೂಡ ದಯವಿಟ್ಟು ಈ ದಿನವೇ ರದ್ದುಗೊಳಿಸಿ,” ಎಂದು ಹೇಳಿದೆ.</verse>
				<verse number="12">ಅವರು, “ಹಿಂದಕ್ಕೆ ಕೊಡುತ್ತೇವೆ; ಅವರಿಂದ ಏನೂ ಕೇಳುವುದಿಲ್ಲ. ನೀವು ಹೇಳಿದಂತೆಯೇ, ಮಾಡುತ್ತೇವೆ,” ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರೆಯಿಸಿದೆ; ಯಾಜಕರ ಮುಂದೆ, ತಾವು ಕೊಟ್ಟ ಮಾತಿನಂತೆ ನಡೆಯುವುದಾಗಿ ಪ್ರಮಾಣ ಮಾಡಿಸಿದೆ.</verse>
				<verse number="13">ಇದಲ್ಲದೆ, ನನ್ನ ನಡುಪಟ್ಟಿ ಯನ್ನು ಝಾಡಿಸಿಬಿಟ್ಟು, “ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆ ಇಂದಲೂ ಆಸ್ತಿಪಾಸ್ತಿಯಿಂದಲೂ ಈ ಪ್ರಕಾರವೇ ಝಾಡಿಸಿಬಿಡಲಿ; ಅವನು ನಡುಪಟ್ಟಿಯಂತೆಯೇ ಝಾಡಿಸಲ್ಪಟ್ಟು ಬರಿದಾಗಲಿ,” ಎಂದೆ. ಕೂಡಲೆ ಸಭೆಯವರೆಲ್ಲರು ‘ಹಾಗೆಯೇ ಆಗಲಿ’ ಎಂದು ಹೇಳಿ ಸರ್ವೇಶ್ವರನನ್ನು ಕೊಂಡಾಡಿ ಕೊಟ್ಟಮಾತನ್ನು ಕೈಗೊಂಡರು.</verse>
				<verse number="14">ಅರಸ ಅರ್ತಷಸ್ತನು ನನ್ನನ್ನು ಜುದೇಯ ನಾಡಿನ ರಾಜ್ಯಪಾಲನನ್ನಾಗಿ ನೇಮಿಸಿದಂದಿನಿಂದ ಹನ್ನೆರಡು ವರ್ಷಗಳವರೆಗೆ ಅಂದರೆ, ಅವನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆಯ ವರ್ಷದವರೆಗೆ, ನಾನಾಗಲಿ, ನನ್ನ ಸಹೋದರರಾಗಲಿ ರಾಜ್ಯಪಾಲನೆಗೆ ಸಲ್ಲ ತಕ್ಕ ಭತ್ಯದಿಂದ ಜೀವನ ಮಾಡಲಿಲ್ಲ.</verse>
				<verse number="15">ನನಗಿಂತ ಮುಂಚೆಯಿದ್ದ ರಾಜ್ಯಪಾಲರು ಜನರ ಮೇಲೆ ಬಹಳ ತೆರಿಗೆ ಹೊರಿಸಿ, ಅವರಿಂದ ದಿನಕ್ಕೆ ನಾಲ್ವತ್ತು ಬೆಳ್ಳಿ ನಾಣ್ಯದ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು; ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸುತ್ತ ಇದ್ದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಹಾಗೆ ಮಾಡದೆ</verse>
				<verse number="16">ಆ ಗೋಡೆ ಕಟ್ಟುವುದರಲ್ಲೇ ನಿರತನಾಗಿದ್ದೆ; ಮತ್ತು ನನ್ನ ಎಲ್ಲಾ ಸೇವಕರು ಪ್ರತಿದಿನ ಆ ಕೆಲಸಕ್ಕೆ ಬರುವಂತೆ ನೋಡುತ್ತಿದ್ದೆ. ನಾವು ಅಲ್ಲಿ ಭೂಮಿಯನ್ನು ಸಂಪಾದಿಸಿಕೊಂಡಿರಲಿಲ್ಲ.</verse>
				<verse number="17">ಇದಲ್ಲದೆ, ಯೆಹೂದ್ಯರಲ್ಲಿ ನೂರೈವತ್ತುಮಂದಿ ಅಧಿಕಾರಿಗಳು ಹಾಗು ಸುತ್ತಣ ಜನಾಂಗಗಳ ಮಧ್ಯೆ ಇಂದ ನಮ್ಮ ಬಳಿಗೆ ಬರುತ್ತಿದ್ದವರು ನನ್ನ ಪಂಕ್ತಿಯಲ್ಲೇ ಊಟಮಾಡುತ್ತಿದ್ದರು.</verse>
				<verse number="18">ಪ್ರತಿದಿನ ಒಂದು ಹೋರಿ, ಆರು ಕೊಬ್ಬಿದ ಕರು, ಕೆಲವು ಕೋಳಿಗಳು ನಮ್ಮ ಭೋಜನಕ್ಕಾಗಿ ಸಿದ್ಧ ಆಗುತ್ತಿದ್ದವು. ಹತ್ತು ದಿನಕ್ಕೊಮ್ಮೆ ನಾನು ಎಲ್ಲ ತರದ ದ್ರಾಕ್ಷಾರಸವನ್ನು ಬೇಕಾಗುವಷ್ಟು ಒದಗಿಸಿಕೊಡುತ್ತಿದ್ದೆ. ನನಗೆ ಇಷ್ಟೆಲ್ಲಾ ವೆಚ್ಚ ಆಗುತ್ತಿದ್ದರೂ, ಆ ಜನರು ಮಾಡಬೇಕಾಗಿದ್ದ ಕೆಲಸ ಬಹುಕಷ್ಟಕರವಾಗಿದ್ದುದರಿಂದ, ನಾನು ರಾಜಪಾಲನೆಗೆ ಸಲ್ಲತಕ್ಕ ಭತ್ಯವನ್ನು ವಸೂಲಿ ಮಾಡಲಿಲ್ಲ.</verse>
				<verse number="19">‘ನನ್ನ ದೇವರೇ, ನಾನು ಈ ಜನರಿಗೆ ಮಾಡಿದ ಉಪಕಾರವನ್ನು ನೆನೆಸಿಕೊಂಡು ನನಗೆ ಒಳಿತನ್ನು ಅನುಗ್ರಹಿಸಿ!’ ಎಂದು ಪ್ರಾರ್ಥಿಸಿದೆ.</verse>
			</chapter>
			<chapter number="6">
				<verse number="1">ನಾನು ಗೋಡೆಯನ್ನು ಕಟ್ಟಿ ಮುಗಿಸಿ ಬಾಗಿಲುಗಳಿಗೆ ಕದಗಳನ್ನು ಇನ್ನೂ ಹಚ್ಚಿಸಿರಲಿಲ್ಲ. ಗೋಡೆಯ ಸಂದುಗೊಂದುಗಳನ್ನು ಕೂಡಿಸಿದ ಸಂಗತಿ ಸನ್ಬಲ್ಲಟ್, ಟೋಬೀಯ ಹಾಗು ಅರೇಬಿಯನಾದ ಗೆಷಮ್ ಇವರಿಗೂ</verse>
				<verse number="2">ನಮ್ಮ ಬೇರೆ ವಿರೋಧಿಗಳಿಗೂ ಗೊತ್ತಾಯಿತು. ಅವರಲ್ಲಿ ಸನ್ಬಲ್ಲಟ್ ಮತ್ತು ಗೆಷನರು ನನಗೆ, “ಓನೋ ಕಣಿವೆಯ ಹಕ್ಕೆಫಿರೀಮಿನಲ್ಲಿ ಒಬ್ಬರನೊಬ್ಬರು ಎದುರುಗೊಳ್ಳೋಣ ಬಾ,” ಎಂದು ಹೇಳಿ ಕಳುಹಿಸಿದರು. ಅವರು ನನಗೆ ಕೇಡು ಬಗೆಯುವವರು ಎಂದು ತಿಳಿಯಿತು.</verse>
				<verse number="3">ನಾನು ದೂತರ ಮುಖಾಂತರ ಅವರಿಗೆ, “ನನಗೆ ಮುಖ್ಯವಾದ ಕಾರ್ಯವಿದೆ; ಅದನ್ನು ಬಿಟ್ಟು ಬಂದರೆ ಕೆಲಸ ನಿಂತುಹೋಗುತ್ತದೆ; ನಾನು ಬರಲಾಗದು,” ಎಂದು ಹೇಳಿಸಿದೆ.</verse>
				<verse number="4">ಅವರು ನಾಲ್ಕುಸಾರಿ ಅದೇ ರೀತಿ ಹೇಳಿ ಕಳುಹಿಸಿದರೂ ನಾನು ಅದೇ ಉತ್ತರಕೊಟ್ಟೆ.</verse>
				<verse number="5">ಐದನೆಯ ಸಾರಿ ಸನ್ಬಲ್ಲಟನು ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರ ಮುಚ್ಚದಿದ್ದ ಒಂದು ಪತ್ರವನ್ನು ಕಳುಹಿಸಿದನು.</verse>
				<verse number="6">ಅದರಲ್ಲಿ, “ಗೆಷೆಮ್ ಎಂಬವನು ನನಗೆ ತಿಳಿಸಿದ ಪ್ರಕಾರ ನೀನೂ ಯೆಹೂದ್ಯರೂ ನನ್ನ ಮೇಲೆ ದಾಳಿಮಾಡಬೇಕೆಂದಿದ್ದೀರಿ; ಆದುದರಿಂದಲೇ, ನೀನು ಆ ಗೋಡೆಯನ್ನು ಕಟ್ಟಿಸುತ್ತಿರುವೆ. ನೀನು ಅವರ ಅರಸನಾಗುವೆ ಎಂಬ ಸುದ್ದಿ ಜನರಲ್ಲಿ ಹಬ್ಬಿದೆ.</verse>
				<verse number="7">ಇದಲ್ಲದೆ, ಜುದೇಯದಲ್ಲಿ ಒಬ್ಬ ಅರಸನಿದ್ದಾನೆಂದು ನಿನ್ನನ್ನು ಕುರಿತು ಜೆರುಸಲೇಮಿನಲ್ಲಿ ಪ್ರಕಟಿಸುವುದಕ್ಕಾಗಿ ಪ್ರವಾದಿಗಳನ್ನು ನೇಮಿಸಿರುವೆ ಎಂಬುದಾಗಿ ಹೇಳುತ್ತಾರೆ. ಈ ಸುದ್ದಿ ರಾಜನಿಗೂ ಮುಟ್ಟಲಿದೆ; ಆದುದರಿಂದ ಕೂಡಿ ಮಾತಾಡೋಣ ಬಾ,” ಎಂದು ಬರೆದಿತ್ತು.</verse>
				<verse number="8">ಅದಕ್ಕೆ ನಾನು, “ನೀನು ಬರೆದಂಥದ್ದು ಏನೂ ನಡೆದಿಲ್ಲ; ಅದನ್ನು ನೀನೆ ನಿನ್ನ ಮನಸ್ಸಿನಲ್ಲಿ ಕಲ್ಪಿಸಿಕೊಂಡಿರುವೆ,” ಎಂದು ಹೇಳಿಕಳುಹಿಸಿದೆ.</verse>
				<verse number="9">ಹೀಗೆ ಎಲ್ಲರೂ, ನಮ್ಮ ಕೈಗಳು ಜೋಲುಬಿದ್ದು ಕೆಲಸ ಮುಗಿಯದೆ ನಿಂತುಹೋಗಲಿ ಎಂದುಕೊಂಡು ನಮ್ಮನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದರು. ನಾನೋ, “ನನ್ನ ದೇವರೇ, ನನ್ನ ಕೈಗಳನ್ನು ಬಲಪಡಿಸಿ,” ಎಂದು ಪ್ರಾರ್ಥಿಸಿದೆ.</verse>
				<verse number="10">ಒಂದು ದಿನ ನಾನು ಮೆಹೇಟಬೇಲನ ಮೊಮ್ಮಗನೂ ದೆಲಾಯನ ಮಗನೂ ಆದ ಶೆಮಾಯನ ಮನೆಗೆ ಹೋದೆ. ಅವನು ಅಲ್ಲಿ ಅವಿತುಕೊಂಡಿದ್ದನು. ಅವನು ನನಗೆ, “ನಿನ್ನನ್ನು ಕೊಲ್ಲುವುದಕ್ಕೆ ಬರುತ್ತಾರೆ; ಈ ರಾತ್ರಿಯೇ ಬರುತ್ತಾರೆ! ಆದುದರಿಂದ ನಾವಿಬ್ಬರೂ ದೇವಾಲಯಕ್ಕೆ ಹೋಗಿ ಗರ್ಭಗುಡಿಯನ್ನು ಸೇರಿ ಅದರ ಕದಗಳನ್ನು ಮುಚ್ಚಿಕೊಳ್ಳೋಣ ಬಾ,” ಎಂದು ಹೇಳಿದನು.</verse>
				<verse number="11">ಅದಕ್ಕೆ ನಾನು, “ನನ್ನಂಥ ಗಂಡು ಓಡಿಹೋಗಿ ಅವಿತುಕೊಳ್ಳುವುದು ಸರಿಯೇ? ಇದಲ್ಲದೆ ಪ್ರಾಣರಕ್ಷಣೆಗಾಗಿ ಗರ್ಭಗುಡಿಯನ್ನು ನಾನು ಪ್ರವೇಶಿಸಬಹುದೇ? ಇಲ್ಲ, ನಾನು ಬರುವುದಿಲ್ಲ,” ಎಂದು ಉತ್ತರಕೊಟ್ಟೆ.</verse>
				<verse number="12">ನಾನು ಸೂಕ್ಷ್ಮವಾಗಿ ವಿಚಾರಮಾಡಿದಾಗ, ನನ್ನ ಬಗ್ಗೆ ಆ ಕಾಲಜ್ಞಾನ ವಚನವನ್ನು ಉಚ್ಚರಿಸುವುದಕ್ಕೆ ಇವನನ್ನು ಪ್ರೇರಿಸಿದವನು ದೇವರಲ್ಲ; ಟೋಬೀಯನೂ ಸನ್ಬಲ್ಲಟನೂ ಇವನಿಗೆ ಲಂಚಕೊಟ್ಟು ಹಾಗೆ ಹೇಳಿಸಿದರೆಂದು ನನಗೆ ಗೊತ್ತು ಆಯಿತು.</verse>
				<verse number="13">ನಾನು ಅಂಜಿಕೊಂಡು, ಇವನ ಮಾತಿನಂತೆ ನಡೆದು ದೋಷಿಯಾಗಿ, ತಮ್ಮ ನಿಂದೆಗೂ ಕೆಟ್ಟ ಹೆಸರಿಗೂ ಗುರಿಯಾಗಲಿ ಎಂದು ಅವರು ಈ ಶೆಮಾಯನಿಗೆ ಲಂಚಕೊಟ್ಟಿದ್ದರು.</verse>
				<verse number="14">“ಓ ದೇವರೇ, ಟೋಬೀಯ-ಸನ್ಬಲ್ಲಟರು ಮಾಡಿದ ಈ ದುಷ್ಕೃತ್ಯಗಳು ನಿಮ್ಮ ನೆನಪಿನಲ್ಲಿರಲಿ; ನನ್ನನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದ ಪ್ರವಾದಿನಿಯಾದ ನೋವದ್ಯ ಮುಂತಾದ ಪ್ರವಾದಿಗಳನ್ನು ಮರೆಯಬೇಡಿ,” ಎಂದು ನಾನು ಪ್ರಾರ್ಥಿಸಿದೆ.</verse>
				<verse number="15">ಗೋಡೆಯು ಭಾದ್ರಪದ ಮಾಸದ ಇಪ್ಪತ್ತೈದನೆಯ ದಿನದಲ್ಲಿ ಮುಗಿಯಿತು. ಅದನ್ನು ಕಟ್ಟುವುದಕ್ಕೆ ಒಟ್ಟು ಐವತ್ತೆರಡು ದಿನಗಳು ಹಿಡಿದವು.</verse>
				<verse number="16">ಈ ಸುದ್ದಿ ಸುತ್ತ-ಮುತ್ತಲಿನ ನಮ್ಮ ವಿರೋಧಿಗಳಾದ ಜನಾಂಗಗಳಿಗೆ ಮುಟ್ಟಿತು. ಅವರು ಭಯಭೀತರಾದರು. ಸೊಕ್ಕು ಮುರಿದವರಾಗಿ ಹಾಗೇ ಕುಗ್ಗಿಹೋದರು. ಈ ಕಾರ್ಯ ನಮ್ಮ ದೇವರಿಂದಲೇ ಪೂರ್ಣಗೊಂಡಿತು ಎಂದು ಅವರಿಗೆ ಮನದಟ್ಟಾಯಿತು.</verse>
				<verse number="17">ಅದೇ ಸಮಯದಲ್ಲಿ, ಯೆಹೂದ್ಯ ಶ್ರೀಮಂತರಿಗೂ ಟೋಬೀಯನಿಗೂ ಬಹಳ ಪತ್ರ ವ್ಯವಹಾರ ನಡೆಯುತ್ತಿತ್ತು.</verse>
				<verse number="18">ಏಕೆಂದರೆ ಅವನು ಆರಹನ ಮಗ ಶೆಕನ್ಯನ ಅಳಿಯನಾಗಿದ್ದ ಹಾಗು ಯೆಹೋಹಾನಾನನೆಂಬ ಅವನ ಮಗ ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ಮದುವೆಮಾಡಿಕೊಂಡಿದ್ದ. ಆದ್ದರಿಂದ ಯೆಹೂದ್ಯರಲ್ಲಿ ಅನೇಕರು ಅವನಿಗೆ ಪ್ರಮಾಣಮಾಡಿ ಅವನ ಪಕ್ಷದವರಾಗಿದ್ದರು.</verse>
				<verse number="19">ಅವರು ಅವನ ಒಳ್ಳೆತನವನ್ನೇ ನನ್ನ ಮುಂದೆ ವರ್ಣಿಸುತ್ತಾ ನನ್ನ ಮಾತುಗಳನ್ನು ಅವನಿಗೆ ತಿಳಿಸುತ್ತಾ ಇದ್ದರು. ಟೋಬೀಯನೂ ನನ್ನಲ್ಲಿ ಭಯಹುಟ್ಟಿಸುವುದಕ್ಕಾಗಿ ನನಗೆ ಪತ್ರಗಳನ್ನು ಕಳುಹಿಸುತ್ತಿದ್ದನು.</verse>
			</chapter>
			<chapter number="7">
				<verse number="1">ಗೋಡೆಯನ್ನು ಕಟ್ಟಿ ಮುಗಿಸಿದನಂತರ ನಾನು ಕದಗಳನ್ನು ಹಚ್ಚಿಸಿದೆ; ದ್ವಾರಪಾಲಕರನ್ನೂ ಗಾಯಕರನ್ನೂ ಲೇವಿಯರನ್ನೂ ನೇಮಿಸಲಾಯಿತು.</verse>
				<verse number="2">ಆಮೇಲೆ ನನ್ನ ತಮ್ಮ ಹನಾನಿಗೆ ಹಾಗು ಬಹಳ ನಂಬಿಗಸ್ತನೂ ದೇವರಲ್ಲಿ ವಿಶೇಷ ಭಯಭಕ್ತಿಯುಳ್ಳವನೂ ದುರ್ಗಾ ಅಧಿಕಾರಿಯೂ ಆಗಿದ್ದ ಹನನ್ಯನಿಗೆ ಜೆರುಸಲೇಮಿನ ಮೇಲ್ವಿಚಾರಣೆಯನ್ನು ಒಪ್ಪಿಸಿದೆ.</verse>
				<verse number="3">ಅವರಿಗೆ, “ಬಿಸಿಲೇರುವುದಕ್ಕಿಂತ ಮೊದಲೇ ಜೆರುಸಲೇಮಿನ ಬಾಗಿಲುಗಳನ್ನು ತೆರೆಯಬಾರದು; ಕಾವಲುಗಾರರು ಇನ್ನೂ ಇರುವಲ್ಲೇ ಕದಗಳನ್ನು ಮುಚ್ಚಿ ಭದ್ರಪಡಿಸಬೇಕು. ಇದಲ್ಲದೆ, ಜೆರುಸಲೇಮಿನ ನಿವಾಸಿಗಳಲ್ಲೇ ಕಾವಲುಗಾರರನ್ನು ಗೊತ್ತುಮಾಡಿರಿ. ಪ್ರತಿಯೊಬ್ಬನನ್ನು ಅವನವನ ಮನೆಯ ಎದುರಿನಲ್ಲೇ ಕಾವಲಿರುವಂತೆ ನೇಮಿಸಿರಿ,” ಎಂದು ಆಜ್ಞಾಪಿಸಿದೆ.</verse>
				<verse number="4">ಪಟ್ಟಣವೇನೊ ಸವಿಸ್ತಾರವಾಗಿತ್ತು. ಆದರೆ ಅದರೊಳಗಿದ್ದ ಜನ ಬಹಳ ಸ್ವಲ್ಪಮಂದಿ. ಮನೆಗಳನ್ನು ಇನ್ನೂ ಕಟ್ಟಿರಲಿಲ್ಲ.</verse>
				<verse number="5">ಹೀಗಿರಲು, ನಾನು ನನ್ನ ದೇವರ ಪ್ರೇರಣೆಯಿಂದ ಶ್ರೀಮಂತರನ್ನು, ಅಧಿಕಾರಿಗಳನ್ನು ಹಾಗು ಜನಸಾಮಾನ್ಯರನ್ನು ಜನಗಣತಿಗಾಗಿ ಸಭೆಸೇರಿಸಿದೆ. ಆಗ ಜೆರುಸಲೇಮಿಗೆ ಮೊದಲು ಹಿಂದಿರುಗಿ ಬಂದವರ ಹೆಸರುಗಳ ಪಟ್ಟಿ ನನಗೆ ಸಿಕ್ಕಿತು. ಅದರಲ್ಲಿ ಹೀಗೆ ಬರೆದಿತ್ತು:</verse>
				<verse number="6">ಸೆರೆಯಿಂದ ಹಿಂತಿರುಗಿ ಬಂದ ಯೆಹೂದ ಜನಾಂಗದವರ ಪಟ್ಟಿ: ಬಾಬಿಲೋನಿನ ಅರಸ ನೆಬೂಕದ್ನೆಚ್ಚರನಿಂದ ಸೆರೆಗೆ ಒಯ್ಯಲ್ಪಟ್ಟವರಲ್ಲಿ ಜೆರುಸಲೇಮಿಗೂ ಜುದೇಯ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ ಹಿಂದಿರುಗಿದವರು ಇವರು: ಅ ಇವರ ನಾಯಕರಲ್ಲಿ</verse>
				<verse number="7">ಜೆರುಬ್ಬಾಬೆಲ್, ಯೇಷೂವ, ನೆಹೆಮೀಯ, ಅಜರ್ಯ, ರಗಮ್ಯ, ನಹಮಾನೀ, ಮೊರ್ದೆಕೈ, ಬಿಲ್ಷಾನ್, ಮಿಸ್ಪೆರತ್, ಬಿಗ್ವೈ, ನೆಹೂಮ್ ಹಾಗು ಬಾಣ ಎಂಬವರು: ಆ ಅವರ ಜನಸಾಮಾನ್ಯರಲ್ಲಿ:</verse>
				<verse number="8">ಪರೋಷಿನವರು - 2172</verse>
				<verse number="9">ಶೆಫಟ್ಯನವರು -372</verse>
				<verse number="10">ಆರಹನವರು - 652</verse>
				<verse number="11">ಪಹತ್‍ಮೋವಾಬಿನವರಾದ ಯೇಷೂವ ಮತ್ತು ಯೋವಾಬ್ ಸಂತಾನದವರು - 2818</verse>
				<verse number="12">ಏಲಾಮಿನವರು - 1254</verse>
				<verse number="13">ಜತ್ತೂವಿನವರು - 845</verse>
				<verse number="14">ಜಕ್ಕೈಯವರು - 760</verse>
				<verse number="15">ಬಿನ್ನೂಯವರು - 648</verse>
				<verse number="16">ಬೇಬೈಯವರು - 628</verse>
				<verse number="17">ಅಜ್ಗಾದಿನವರು - 2322</verse>
				<verse number="18">ಅದೋನೀಕಾಮಿನವರು - 667</verse>
				<verse number="19">ಬಿಗ್ವೈಯವರು - 2067</verse>
				<verse number="20">ಅದೀನನವರು - 665</verse>
				<verse number="21">ಅಟೇರಿನವರಾದ ಹಿಜ್ಕೀಯನ ಸಂತಾನದವರು - 98</verse>
				<verse number="22">ಹಾಷುಮಿನವರು -328</verse>
				<verse number="23">ಬೇಚೈಯವರು -324</verse>
				<verse number="24">ಹಾರಿಫಿನವರು - 112</verse>
				<verse number="25">ಗಿಬ್ಯೋನಿನವರು - 95</verse>
				<verse number="26">ಬೆತ್ಲೆಹೇಮ್ ನೆಟೋಫ ಊರುಗಳವರು - 188</verse>
				<verse number="27">ಅನಾತೋತ್ ಊರಿನವರು - 128</verse>
				<verse number="28">ಬೇತಜ್ಮಾವೇತಿನವರು - 42</verse>
				<verse number="29">ಕಿರ್ಯತ್ಯಾರೀಮ್ ಕೆಫೀರಾ ಬೇರೋತ್ ಊರುಗಳವರು - 743</verse>
				<verse number="30">ರಾಮಾ, ಗೆಬ ಊರುಗಳವರು - 621</verse>
				<verse number="31">ಮಿಕ್ಮಾಸಿನವರು - 122</verse>
				<verse number="32">ಬೇತೇಲ್, ಆಯಿ ಎಂಬ ಊರುಗಳವರು - 123</verse>
				<verse number="33">ಎರಡನೆಯ ನೆಬೋನಿನವರು - 52</verse>
				<verse number="34">ಎರಡನೆಯ ಏಲಾಮಿನವರು - 1254</verse>
				<verse number="35">ಹಾರಿಮನವರು -320</verse>
				<verse number="36">ಜೆರಿಕೋವಿನವರು -345</verse>
				<verse number="37">ಲೋದ್, ಹಾದೀದ್, ಓನೋ ಎಂಬ ಊರುಗಳವರು - 721</verse>
				<verse number="38">ಸೆನಾಹನವರು -3930 ಇ</verse>
				<verse number="39">ಯಾಜಕರಲ್ಲಿ - ಯೆದಾಯನವರಾದ ಯೇಷೂವನ ಮನೆಯವರು - 973</verse>
				<verse number="40">ಇಮ್ಮೇರನವರು - 1052</verse>
				<verse number="41">ಪಷ್ಹೂರನವರು - 1247</verse>
				<verse number="42">ಹಾರಿಮನವರು - 1017 ಈ</verse>
				<verse number="43">ಲೇವಿಯರಲ್ಲಿ - ಹೋದವ್ಯನವರಾದ ಯೇಷೂವ, ಕದ್ಮೀಯೇಲ್ ಇವರ ಸಂತಾನದವರು - 74 ಉ</verse>
				<verse number="44">ಗಾಯಕರಲ್ಲಿ - ಆಸಾಫ್ಯರು - 148 ಊ</verse>
				<verse number="45">ದ್ವಾರಪಾಲಕರಲ್ಲಿ - ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟಾ, ಶೋಬೈ ಇವರ ಸಂತಾನದವರು ಒಟ್ಟು - 138 ಎ</verse>
				<verse number="46">ದೇವಸ್ಥಾನ ಪರಿಚಾರಕರಲ್ಲಿ - ಜೀಹ, ಹಸೂಫ, ಟಬ್ಬಾವೋತ್, ಕೇರೋಸ್, ಸೀಯ,</verse>
				<verse number="47">ಪಾದೋನ್, ಲೆಬಾನ, ಹಗಾಬ,</verse>
				<verse number="48">ಸಲ್ಮೈ, ಹಾನಾನ್, ಗಿದ್ದೇಲ್, ಗಹರ್, ರೆವಾಯ, ರೆಚೀನ್,</verse>
				<verse number="49"></verse>
				<verse number="50">ನೆಕೋದ, ಗಜ್ಜಾಮ್, ಉಜ್ಜ, ಪಾಸೇಹ,</verse>
				<verse number="51"></verse>
				<verse number="52">ಬೇಸೈ, ಮೆಯನೀಮ್, ನೆಫೀಷೆಸೀಮ್,</verse>
				<verse number="53">ಬಕ್ಬೂಕ್, ಹಕ್ಕೂಫ, ಹರ್ಹೂರ್, ಬಚ್ಲೂತ್, ಮೆಹೀದ,</verse>
				<verse number="54">ಹರ್ಷ, ಬರ್ಕೋಸ್, ಸೀಸೆರ, ತೆಮಹ,</verse>
				<verse number="55"></verse>
				<verse number="56">ನೆಚೀಹ, ಹಟೀಫ ಇವರ ಸಂತಾನದವರು. ಏ</verse>
				<verse number="57">ಸೊಲೊಮೋನನ ದಾಸರಲ್ಲಿ - ಸೋಟೈ, ಸೋಫೆರೆತ್, ಪೆರೀದ, ಯಾಲ,</verse>
				<verse number="58">ದರ್ಕೋನ್, ಗಿದೇಲ್, ಶೆಫಟ್ಯ, ಹಟ್ಟೀಲ್,</verse>
				<verse number="59">ಪೋಕೆರೆತ್ ಹಚ್ಚೆಬಾಯೀಮ್, ಆಮೋನ್ ಇವರ ಸಂತಾನದವರು.</verse>
				<verse number="60">ಎಲ್ಲಾ ದೇವಸ್ಥಾನ ಪರಿಚಾರಕರು ಹಾಗು ಸೊಲೊಮೋನನ ಸೇವಕರು ಒಟ್ಟು -392 ಮಂದಿ.</verse>
				<verse number="61">ತೇಲ್ಮೆಲಹ, ತೇಲ್ಹರ್ಷ, ಕೆರೂಬದ್ದೋನ್, ಇಮ್ಮೇರ್ ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ ತಾವು ಇಸ್ರಯೇಲರೆಂಬುದನ್ನು ಸ್ಥಾಪಿಸಲಾರದವರಾದ</verse>
				<verse number="62">ದೆಲಾಯ, ಟೋಬೀಯ, ನೆಕೋದ ಇವರ ಸಂತಾನದವರು 642 ಮಂದಿ.</verse>
				<verse number="63">ಯಾಜಕರಲ್ಲಿ ಹೋಬಾಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು ತಮ್ಮ ವಂಶಾವಳಿಯನ್ನು ತೋರಿಸಲಾರದೆ ಹೋದರು. (ಈ ಬರ್ಜಿಲ್ಲೈ ಎಂಬುವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡು ಅವನ ಹೆಸರನ್ನು ಇಟ್ಟುಕೊಂಡಿದ್ದನು.)</verse>
				<verse number="64">ಇವರು ತಮ್ಮ ವಂಶಾವಳಿ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅಶುದ್ಧರೆಂದು ಯಾಜಕಾ ಸೇವೆಯಿಂದ ಬಹಿಷ್ಕೃತರಾದರು.</verse>
				<verse number="65">ಊರಿಮ್‍ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳನ್ನು ಭೋಜನ ಮಾಡಬಾರದೆಂಬುದಾಗಿ ರಾಜ್ಯಪಾಲ ತೀರ್ಪುಮಾಡಿದನು.</verse>
				<verse number="66">ಸರ್ವಸಮೂಹದವರ ಒಟ್ಟು ಸಂಖ್ಯೆ - ನಾಲ್ವತ್ತೆರಡು ಸಾವಿರದ ಮುನ್ನೂರರುವತ್ತು.</verse>
				<verse number="67">ಈ ಸಂಖ್ಯೆಯಲ್ಲಿ ಎಣಿಕೆಯಾಗದ ಅವರ ದಾಸದಾಸಿಯರು ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ. ಅವರ ಗಾಯಕರೂ ಗಾಯಕಿಯರೂ ಇನ್ನೂರ ನಾಲ್ವತ್ತೈದು ಮಂದಿ.</verse>
				<verse number="68">ಅವರಿಗೆ ಏಳುನೂರ ಮೂವತ್ತಾರು ಕುದುರೆಗಳೂ ಇನ್ನೂರ ನಾಲ್ವತ್ತೈದು ಹೇಸರಕತ್ತೆಗಳೂ</verse>
				<verse number="69">ನಾನೂರ ಮೂವತ್ತೈದು ಒಂಟೆಗಳೂ ಆರುಸಾವಿರದ ಏಳುನೂರಿಪ್ಪತ್ತು ಕತ್ತೆಗಳೂ ಇದ್ದವು.</verse>
				<verse number="70">ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕ್ಕೆಬೇಕಾದ ದ್ರವ್ಯಸಹಾಯ ನೀಡಿದರು. ತಿರ್ಷಾತಾ ಎನಿಸಿಕೊಳ್ಳುವ ರಾಜ್ಯಪಾಲ ಭಂಡಾರಕ್ಕೆ ಕೊಟ್ಟದ್ದು - ಎಂಟು ಕಿಲೋಗ್ರಾಂ ಬಂಗಾರ. ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು.</verse>
				<verse number="71">ಬೇರೆ ಕೆಲವು ಮಂದಿ ಗೋತ್ರಪ್ರಧಾನರು ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು ನೂರಾರವತ್ತೆಂಟು ಕಿಲೋಗ್ರಾಂ ಬಂಗಾರ; ಸಾವಿರದ ಇನ್ನೂರ ಐವತ್ತು ಕಿಲೋಗ್ರಾಂ ಬೆಳ್ಳಿ</verse>
				<verse number="72">ಉಳಿದ ಜನರು ಕೊಟ್ಟದ್ದು - ನೂರ ಅರವತ್ತೆಂಟು ಕಿಲೋಗ್ರಾಂ ಬಂಗಾರ; ನೂರ ನಲವತ್ತು ಕಿಲೋಗ್ರಾಂ ಬೆಳ್ಳಿ, ಅರುವತ್ತೇಳು ಯಾಜಕವಸ್ತ್ರಗಳು.</verse>
				<verse number="73">ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ಜನಸಾಮಾನ್ಯರು, ದೇವಸ್ಥಾನದ ಪರಿಚಾರಕರು ಅಂತೂ ಇಸ್ರಯೇಲರೆಲ್ಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.</verse>
			</chapter>
			<chapter number="8">
				<verse number="1">ತಮ್ಮ ತಮ್ಮ ಪಟ್ಟಣಗಲ್ಲಿ ವಾಸಿಸುತ್ತಿದ್ದ ಇಸ್ರಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ಒಟ್ಟಿಗೆ ಸೇರಿದರು. ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಧರ್ಮಶಾಸ್ತ್ರದ ಗ್ರಂಥವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡರು.</verse>
				<verse number="2">ಯಾಜಕ ಎಜ್ರನು, ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ, ಏಳನೆಯ ತಿಂಗಳಿನ ಪ್ರಥಮ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದು ಬೆಳಗಿನಿಂದ ಮಧ್ಯಾಹ್ನದವರೆಗೂ ಓದಿದನು.</verse>
				<verse number="3">ಆ ನೀರುಬಾಗಿಲಿನ ಮುಂದಣ ಬಯಲಿನಲ್ಲಿ ಕೂಡಿಬಂದಿದ್ದ ಸ್ತ್ರೀಪುರುಷರಲ್ಲಿ ಗ್ರಹಿಸಲು ಶಕ್ತರಾದವರೆಲ್ಲರೂ ಧರ್ಮಶಾಸ್ತ್ರ ಪಾರಾಯಣವನ್ನು ಆಲಿಸುತ್ತಿದ್ದರು.</verse>
				<verse number="4">ಧರ್ಮೋಪದೇಶಕ ಎಜ್ರನು ಪಾರಾಯಣಕ್ಕಾಗಿ ಮಾಡಲಾಗಿದ್ದ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬುವರು ಇದ್ದರು. ಎಡಗಡೆಯಲ್ಲಿ ಪೆದಾಯ, ಮೀಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬುವರು ನಿಂತಿದ್ದರು.</verse>
				<verse number="5">ಜನಸಮೂಹಕ್ಕಿಂತಲೂ ಎತ್ತರವಾದ ಸ್ಥಳದಲ್ಲಿ ನಿಂತಿದ್ದ ಎಜ್ರನು ಜನರ ಸಮಕ್ಷಮದಲ್ಲಿ ಗ್ರಂಥವನ್ನು ತೆರೆದ ಕೂಡಲೆ, ಎಲ್ಲರು ಎದ್ದುನಿಂತರು.</verse>
				<verse number="6">ಎಜ್ರನು ಪರಾತ್ಪರ ದೇವರಾದ ಸರ್ವೇಶ್ವರನನ್ನು ಸ್ತುತಿಸಿದಾಗ ಸರ್ವಜನರೂ ತಮ್ಮ ಕೈಗಳನ್ನೆತ್ತಿ ‘ಆಮೆನ್, ಆಮೆನ್’ ಎಂದು ಹೇಳಿ ನೆಲದಮಟ್ಟಿಗೂ ತಲೆಬಾಗಿ ಸರ್ವೇಶ್ವರನನ್ನು ಆರಾಧಿಸಿದರು.</verse>
				<verse number="7">ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮಶಾಸ್ತ್ರವನ್ನು ಜನರು ಗ್ರಹಿಸುವಂತೆ ಮಾಡಿದರು.</verse>
				<verse number="8">ಜನರು ಎದ್ದುನಿಂತ ನಂತರ ಅವರು ದೇವರ ಧರ್ಮಶಾಸ್ತ್ರವನ್ನು ಸ್ಪಷ್ಟವಾಗಿ ಓದುತ್ತಾ ಅದರ ತಾತ್ಪರ್ಯವನ್ನು ವಿವರಿಸಿದರು. ಜನರು ಚೆನ್ನಾಗಿ ಗ್ರಹಿಸಿಕೊಂಡರು.</verse>
				<verse number="9">ಜನರೆಲ್ಲರು ಧರ್ಮೋಪದೇಶದ ವಾಕ್ಯಗಳನ್ನು ಕೇಳುತ್ತಾ ಕಣ್ಣೀರಿಡುತ್ತಿದ್ದರು. ರಾಜ್ಯಪಾಲ ನೆಹೆಮೀಯನು, ಧರ್ಮೋಪದೇಶ ಮಾಡುವ ಯಾಜಕ ಎಜ್ರನು ಹಾಗು ಜನರನ್ನು ಸಂಬೋಧಿಸುತ್ತಿದ್ದ ಲೇವಿಯರು ಜನರಿಗೆ, “ಈ ದಿನ ನಿಮ್ಮ ದೇವರಾದ ಸರ್ವೇಶ್ವರನಿಗೆ ಪರಿಶುದ್ಧ ದಿನ! ಆದುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿ,” ಎಂದು ಹೇಳಿದರು.</verse>
				<verse number="10">ಇದಲ್ಲದೆ, ಎಜ್ರನು ಅವರಿಗೆ, “ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿ; ತಮಗಾಗಿ ಏನೂ ಸಿದ್ಧಮಾಡದವರಿಗೆ ಒಂದು ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಸರ್ವೇಶ್ವರನಿಗೆ ಪ್ರತಿಷ್ಠಿತ ದಿನ! ವ್ಯಸನಪಡಬೇಡಿ; ಸರ್ವೇಶ್ವರನ ಆನಂದವೇ ನಿಮ್ಮ ಆಶ್ರಯವಾಗಿದೆ,” ಎಂದನು.</verse>
				<verse number="11">ಲೇವಿಯರು ಕೂಡ, “ಸುಮ್ಮನಿರಿ, ಇದು ದೇವರ ದಿವಸ; ದುಃಖಿಸಬೇಡಿ,” ಎಂದು ಹೇಳಿ ಜನರನ್ನು ಸಂತೈಸಿದರು.</verse>
				<verse number="12">ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗಮನಿಸಿ, ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ಏನೂ ಇಲ್ಲದವರಿಗೆ ಪಾಲುಗಳನ್ನು ಕಳುಹಿಸಿ, ಬಹಳವಾಗಿ ಸಂತೋಷಪಟ್ಟರು.</verse>
				<verse number="13">ಮರುದಿನ ಎಲ್ಲ ಇಸ್ರಯೇಲ್ ಗೋತ್ರಪ್ರಧಾನರು, ಯಾಜಕರು ಹಾಗು ಲೇವಿಯರು ಧರ್ಮಶಾಸ್ತ್ರದ ಅಧ್ಯಯನಕ್ಕಾಗಿ ಧರ್ಮೋಪದೇಶಕನಾದ ಎಜ್ರನ ಬಳಿಗೆ ಕೂಡಿಬಂದರು.</verse>
				<verse number="14">ಏಳನೆಯ ತಿಂಗಳಿನ ಜಾತ್ರೆಯಲ್ಲಿ ಇಸ್ರಯೇಲರು ಪರ್ಣಕುಟೀರಗಳಲ್ಲಿ ವಾಸಿಸಬೇಕಾಗಿತ್ತು.</verse>
				<verse number="15">ಈ ನಿಯಮದ ಪ್ರಕಾರ ಆ ಪರ್ಣಕುಟೀರ ನಿರ್ಮಾಣಕ್ಕಾಗಿ ಜನರು ಗುಡ್ಡಕ್ಕೆ ಹೋಗಿ, ಒಲೀವ, ಕಾಡು ಓಲೀವ್, ಸುಗಂಧ, ಖರ್ಜೂರ ಮುಂತಾದ ಮರಗಳ ದಟ್ಟವಾದ ಎಲೆಗಳುಳ್ಳ ಕೊಂಬೆಗಳನ್ನು ತರಬೇಕಾಗಿತ್ತು. ‘ಇದಕ್ಕಾಗಿ ಅವರ ಎಲ್ಲ ಪಟ್ಟಣಗಳಲ್ಲಿಯು ಹಾಗು ಜೆರುಸಲೇಮಿನಲ್ಲಿಯು ಡಂಗುರದಿಂದ ಪ್ರಕಟಿಸಬೇಕು’ ಎಂಬುದಾಗಿ ಬರೆದಿರುವ ಶಾಸನವೊಂದು ಮೋಶೆಗೆ ಸರ್ವೇಶ್ವರನಿಂದ ದೊರಕಿದ ಧರ್ಮಶಾಸ್ತ್ರದಲ್ಲಿ ಸಿಕ್ಕಿತು.</verse>
				<verse number="16">ಈ ಆಜ್ಞಾನುಸಾರ ಜನರು ಹೋಗಿ ಕೊಂಬೆಗಳನ್ನು ತೆಗೆದುಕೊಂಡು ಬಂದು, ತಮ್ಮ ತಮ್ಮ ಅಂಗಳಮಾಳಿಗೆಗಳಲ್ಲಿಯೂ, ದೇವಾಲಯದ ಪ್ರಾಕಾರಗಳಲ್ಲಿಯೂ, ನೀರುಬಾಗಿಲು, ಹಾಗು ಎಫ್ರಯಿಮ್ ಬಾಗಿಲು ಇವುಗಳ ಮುಂದಣ ಬಯಲುಗಳಲ್ಲಿಯೂ ಪರ್ಣಕುಟೀರಗಳನ್ನು ಮಾಡಿಕೊಂಡರು.</verse>
				<verse number="17">ನೂನನ ಮಗ ಯೆಹೋಶುವನ ಕಾಲದಿಂದ ಆವರೆಗೂ ಇಸ್ರಯೇಲರು ಹೀಗೆ ಮಾಡಿರಲಿಲ್ಲ. ಸೆರೆಯಿಂದ ಹಿಂತಿರುಗಿಬಂದ ಸರ್ವಸಮಾಜದವರು ಪರ್ಣಕುಟೀರಗಳನ್ನು ಮಾಡಿಕೊಂಡು, ಅವುಗಳಲ್ಲಿ ವಾಸಿಸುತ್ತಾ, ಬಹು ಸಂತೋಷಪಟ್ಟರು.</verse>
				<verse number="18">ಎಜ್ರನು, ಮೊದಲನೆಯ ದಿನದಿಂದ ಕಡೆಯ ದಿನದವರೆಗೂ ಪ್ರತಿದಿನವೂ ದೇವರ ಧರ್ಮಶಾಸ್ತ್ರವನ್ನು ಜನರಿಗೆ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಜಾತ್ರೆ ನಡೆಯಿತು. ನೇಮದ ಪ್ರಕಾರ ಎಂಟನೆಯ ದಿನ ಮುಕ್ತಾಯ ಸಮಾರಂಭಕ್ಕಾಗಿ ಸಭೆಕೂಡಿದರು.</verse>
			</chapter>
			<chapter number="9">
				<verse number="1">ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನ, ಇಸ್ರಯೇಲರು ಉಪವಾಸವಾಗಿದ್ದು ಗೋಣೀ ತಟ್ಟನ್ನು ಕಟ್ಟಿಕೊಂಡು, ತಲೆಯ ಮೇಲೆ ಮಣ್ಣುಸುರಿದುಕೊಂಡು, ನೆರೆದುಬಂದರು.</verse>
				<verse number="2">ಇಸ್ರಯೇಲ್ ಸಂತಾನದವರು, ಎಲ್ಲ ಅನ್ಯಕುಲದವರಿಂದ ತಮ್ಮನ್ನು ಬೇರ್ಪಡಿಸಿಕೊಂಡು ನಿಂತು, ತಮ್ಮ ಪಾಪಗಳನ್ನೂ ತಮ್ಮ ಪಿತೃಗಳ ಪಾಪಗಳನ್ನೂ ಅರಿಕೆಮಾಡಿದರು.</verse>
				<verse number="3">ಅವರು ಮೂರು ತಾಸುಗಳವರೆಗೂ ತಮ್ಮ ತಮ್ಮ ಸ್ಥಳದಲ್ಲೇ ನಿಂತು, ತಮ್ಮ ದೇವರಾದ ಸರ್ವೇಶ್ವರನ ಧರ್ಮಶಾಸ್ತ್ರಗ್ರಂಥವನ್ನು ಪಾರಾಯಣ ಮಾಡಿಸಿದರು. ತರುವಾಯ ಇನ್ನೂ ಮೂರು ತಾಸು ತಮ್ಮ ದೇವರಾದ ಸರ್ವೇಶ್ವರನಿಗೆ ಅಡ್ಡಬಿದ್ದು ಪಾಪಗಳನ್ನು ಅರಿಕೆಮಾಡಿದರು.</verse>
				<verse number="4">ಯೇಷೂವ, ಬಾನೀ, ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ, ಕೆನಾನೀ ಎಂಬವರು ಲೇವಿಯರ ಮೆಟ್ಟಲುಗಳ ಮೇಲೆ ನಿಂತು, ಸ್ವರವೆತ್ತಿ ತಮ್ಮ ದೇವರಾದ ಸರ್ವೇಶ್ವರನಿಗೆ ಮೊರೆಯಿಟ್ಟರು.</verse>
				<verse number="5">ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು, “ಏಳಿ, ನಮ್ಮ ದೇವರಾದ ಸರ್ವೇಶ್ವರನಿಗೆ ಯುಗಯುಗಕ್ಕೂ ಸ್ತುತಿಸ್ತೋತ್ರ ಎನ್ನಿ,” ಎಂದು ಹೇಳಿ ಹೀಗೆ ಪ್ರಾರ್ಥಿಸಿದರು: “ಸರ್ವೇಶ್ವರಾ, ಸ್ತುತಿಸ್ತೋತ್ರ ನಿಮ್ಮ ಮಹಿಮಾಮಯ ನಾಮಕೆ ಮಿಗಿಲಾದುದು ಆ ಶ್ರೀ ನಾಮ ಸರ್ವಸ್ತುತಿ ಕೀರ್ತನೆಗೆ.</verse>
				<verse number="6">ಹೇ ಸರ್ವೇಶ್ವರಾ, ನೀವೊಬ್ಬರೇ ದೇವರು; ಉನ್ನತೋನ್ನತ ಆಕಾಶವನು, ಅದರ ಪರಿವಾರಗಳನು ಬುವಿಯನು, ಕಡಲನು, ಅದರ ಸರ್ವಜಲಚರಗಳನು ಸೃಷ್ಟಿಸಿದಾತ ನೀವು; ಸಮಸ್ತ ಪ್ರಾಣಿಗಳಿಗು ಜೀವಾಧಾರ ನೀವು; ಆರಾಧಿಸುತ್ತವೆ ನಿಮ್ಮನು ಆಕಾಶದ ಪರಿವಾರಗಳು.</verse>
				<verse number="7">ಸರ್ವೇಶ್ವರಾ, ಅಬ್ರಾಮನನು ನೀವು ಆರಿಸಿಕೊಂಡಿರಿ ಬಾಬಿಲೋನಿನ ‘ಊರ್’ ನಗರದಿಂದ ಆತನನು ಬರಮಾಡಿದಿರಿ ದೇವರಾದ ನೀವೇ ಆತನಿಗೆ ‘ಅಬ್ರಹಾಮ’ ಎಂದು ಹೆಸರಿಟ್ಟಿರಿ.</verse>
				<verse number="8">ಆತ ಪ್ರಾಮಾಣಿಕ ವ್ಯಕ್ತಿಯೆಂದು ಗುರುತಿಸಿದಿರಿ ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಯೆಬೂಸಿಯರ, ಗಿರ್ಗಾಷಿಯರ ನಾಡನು ಆತನ ಸಂತಾನದವರಿಗೆ ವಾಗ್ದಾನ ಮಾಡಿದಿರಿ. ಅಂತೆಯೇ ಸತ್ವ ಸ್ವರೂಪರಾದ ನೀವು ಅದನು ಈಡೇರಿಸಿದಿರಿ.</verse>
				<verse number="9">ನೋಡಿದಿರಿ ಈಜಿಪ್ಟಿನಲಿ ನಮ್ಮ ಪಿತೃಗಳು ಪಟ್ಟ ಕಷ್ಟವನು ಆಲಿಸಿದಿರಿ ಕೆಂಪುಸಮುದ್ರದ ಬಳಿ ಅವರಿಟ್ಟ ಮೊರೆಯನು.</verse>
				<verse number="10">ಈಜಿಪ್ಟಿನವರು ಅವರನು ದರ್ಪದಿಂದ ದಮನಮಾಡುವಲ್ಲಿ ಎಸಗಿದಿರಿ ಅದ್ಭುತಕಾರ್ಯಗಳನು ಸೂಚಕಕಾರ್ಯಗಳನು ಫರೋಹನಲಿ, ಅವನ ಸೇವಕರಲಿ, ಆ ನಾಡಿನ ಜನರಲಿ. ಉಳಿಸಿಕೊಂಡಿರಿ ಇಂದಿಗೂ ಅಂದು ಸಾಧಿಸಿದ ಕೀರ್ತಿಯನು.</verse>
				<verse number="11">ಕಡಲನು ಸೀಳಿ, ಆ ಪಿತೃಗಳ ನಡೆಸಿದಿರಿ ಒಣನೆಲದಲೋ ಎಂಬಂತೆ ಅವರ ಬೆನ್ನಟ್ಟಿ ಬಂದವರನು ಜಲರಾಶಿಯ ತಳಮುಟ್ಟಿಸಿದಿರಿ ಕಲ್ಲಂತೆ.</verse>
				<verse number="12">ಹಗಲಲಿ ಅವರ ಮುಂದೆ ಸಾಗಿದಿರಿ ಮೇಘಸ್ತಂಭದಂತೆ ಇರುಳಲಿ ದಾರಿತೋರಿದಿರಿ ಬೆಳಕನೀವ ಅಗ್ನಿಸ್ತಂಭದಂತೆ.</verse>
				<verse number="13">ಸೀನಾಯಿ ಬೆಟ್ಟದ ಮೇಲೆ ಇಳಿದುಬಂದು ಆಕಾಶದ ಕಡೆಯಿಂದ ಅವರೊಡನೆ ಮಾತಾಡಬಂದು ಅವರಿಗನುಗ್ರಹಿಸಿದಿರಿ ನೀತಿನಿಯಮಗಳನು ಸತ್ಯಧರ್ಮೋಪದೇಶವನು, ಶ್ರೇಷ್ಠ ಆಜ್ಞಾವಿಧಿಗಳನು.</verse>
				<verse number="14">ಕಲಿಸಿದಿರಿ ಅವರಿಗೆ ಆಜ್ಞಾವಿಧಿ ಧರ್ಮಗಳನು ಪ್ರಕಟಿಸಿದಿರಿ ನಿಮಗೆ ಮೀಸಲಾದ ವಿಶ್ರಾಂತಿ ದಿನವನು; ನಿಮ್ಮ ದಾಸ ಮೋಶೆಯ ಮುಖಾಂತರ ಸಾಧಿಸಿದಿರಿದನು.</verse>
				<verse number="15">ಹಸಿದಿದ್ದಾಗ ಅವರಿಗಿತ್ತಿರಿ ಉಣವನು ಆಗಸದಿಂದ ಬಾಯಾರಿದ್ದಾಗ ನೀರ ಬರಮಾಡಿದಿರಿ ಬಂಡೆಯೊಳಗಿಂದ ವಾಗ್ದತ್ತ ನಾಡ ಸೇರಿ ಸ್ವಾಧೀನಪಡಿಸಿಕೊಂಡರು ನಿಮ್ಮಾಜ್ಞೆಯಿಂದ.</verse>
				<verse number="16">ಇಷ್ಟಾದರೂ ಗರ್ವಿಗಳಾದರು, ನಮ್ಮೀ ಪಿತೃಗಳು ಹಟಹಿಡಿದು ಅವಿಧೇಯರಾದರು ಉಲ್ಲಂಘಿಸಿ ನಿಮ್ಮಾಜ್ಞಾವಿಧಿಗಳನು.</verse>
				<verse number="17">ಮರೆತುಬಿಟ್ಟರು ನೀವೆಸಗಿದ ಮಹಾತ್ಕಾರ್ಯಗಳನು ಹಟಹಿಡಿದರು ತಮಗೊಬ್ಬ ನಾಯಕನ ನೇಮಿಸಿಕೊಳ್ಳಲು; ಈಜಿಪ್ಟಿಗೆ ತೆರಳಲಿದ್ದರು ಮರಳಿ ಗುಲಾಮರಾಗಲು. ನೀವಾದರೋ ಪಾಪಿಗಳನು ಕ್ಷಮಿಸುವವರು ದಯಾಪೂರಿತರು, ದೀರ್ಘಶಾಂತರು, ಕೃಪಾಳು ದೇವರು, ಅವರನು ಕೈಬಿಡದೆ ಕಾಪಾಡಿ ನಡೆಸಿದವರು.</verse>
				<verse number="18">ಅವರಾದರೋ ಎರಕದ ಹೋರಿಕರುವನು ಮಾಡಿಕೊಂಡರು ತಮ್ಮನು ಈಜಿಪ್ಟಿನಿಂದ ಕರೆತಂದುದು ಅದೇ ಎಂದುಕೊಂಡರು. ಈ ಪರಿಯ ವರ್ತನೆಯಿಂದ ನಿಮ್ಮನ್ನೇ ಅಸಡ್ಡೆಮಾಡಿಬಿಟ್ಟರು.</verse>
				<verse number="19">ಹೀಗಿದ್ದರು ನೀವಾದಿರಿ ಅವರಿಗೆ ಕರುಣಾನಿಧಿ ತೊರೆದುಬಿಡಲಿಲ್ಲ ನೀವವರನು ಮರುಭೂಮಿಯಲಿ. ಬಿಟ್ಟುಹೋಗಲಿಲ್ಲ ದಾರಿತೋರಿದಾ ಮೇಘಸ್ತಂಭ ಹಗಲಲಿ ಮುನ್ನಡೆಯಿತು ಬೆಳಕನೀಯುತಾ ಅಗ್ನಿಸ್ತಂಭ ಇರುಳಲಿ.</verse>
				<verse number="20">ಅವರಿಗಿತ್ತಿರಿ ಉಪದೇಶಿಸಲು ಸತ್ಯಾತ್ಮವನು ಅವರ ಬಾಯಿಂದ ಹಿಂದೆಗೆಯಲಿಲ್ಲ ಮನ್ನವನು ಬಾಯಾರಿದ್ದಾಗ ಕುಡಿಯಲಿತ್ತಿರಿ ಅವರಿಗೆ ನೀರನು.</verse>
				<verse number="21">ಈ ಪರಿ ಸಲಹಿದಿರಿ ಮರುಭೂಮಿಯಲಿ ನಾಲ್ವತ್ತು ವರ್ಷ ಅಲ್ಲವರಿಗಿರಲಿಲ್ಲ ಯಾವುದೊಂದು ಸಂಕಷ್ಟ. ಊದಿಹೋಗಲಿಲ್ಲ ಕಾಲು, ಹರಿದುಹೋಗಲಿಲ್ಲ ಅವರ ವಸ್ತ್ರ.</verse>
				<verse number="22">ರಾಜ್ಯಗಳನು, ಜನಾಂಗಗಳನು ವಶಪಡಿಸಿದಿರಿ ಅವರಿಗೆ ಹಂಚಿಕೊಟ್ಟಿರಿ ಆ ರಾಷ್ಟ್ರಗಳ ಸೊತ್ತುಗಳನೆ ಹೆಷ್ಬೋನಿನ ಅರಸ ಸೀಹೋನನಿಗೆ, ಬಾಷಾನಿನ ಅರಸ ಓಗನಿಗೆ, ಸೇರಿದ ಪ್ರಾಂತ್ಯಗಳಿಗೆ ಸ್ವಾಧೀನಪಡಿಸಿಕೊಂಡರಲ್ಲವೆ?</verse>
				<verse number="23">ಹೆಚ್ಚಿಸಿದಿರಿ ಅವರ ಮಕ್ಕಳನು ಆಗಸದ ನಕ್ಷತ್ರಗಳಷ್ಟೆ; ಬರಮಾಡಿದಿರಿ ಆ ಮಕ್ಕಳನು ವಾಗ್ದತ್ತ ನಾಡಿಗೆ ‘ಅದ ಸೇರಿ, ವಶಮಾಡಿಕೊಳ್ಳಿ’ ಎಂದು ಹೇಳಿದಿರಾ ಪಿತೃಗಳಿಗೆ.</verse>
				<verse number="24">ಅಂತೆಯೇ ಸೇರಿ ಸ್ವಾಧೀನಮಾಡಿಕೊಂಡರು ಆ ನಾಡನು ಅವರಿಗಧೀನಪಡಿಸಿದಿರಿ ಅದರ ರಾಜರನು, ಪ್ರಜೆಗಳನು, ನಿವಾಸಿಗಳನು, ಆ ಕಾನಾನ್ಯರನು, ತಮಗಿಷ್ಟಾನುಸಾರ ನಡೆಸಲು.</verse>
				<verse number="25">ವಶಮಾಡಿಕೊಂಡರು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನು ಸಾರವತ್ತಾದ ಹೊಲಗಳನು, ಧಾನ್ಯ ತುಂಬಿದ ಮನೆಗಳನು, ತೋಡಿದ ಬಾವಿಗಳನು ದ್ರಾಕ್ಷೀತೋಟಗಳನು, ಎಣ್ಣೇಮರ ತೋಪುಗಳನು, ನಾನಾಫಲವೃಕ್ಷಗಳನು. ತಿಂದು ತೃಪ್ತರಾದರು, ಕೊಬ್ಬಿದರು, ನೀವಿತ್ತ ಸಮೃದ್ಧಿಯಲಿ ನಲಿದಾಡಿದರು.</verse>
				<verse number="26">ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.</verse>
				<verse number="27">ಎಂದೇ ನೀವಿತ್ತಿರಿ ಅವರನು ಕ್ರೂರ ಶತ್ರುಗಳ ವಶಕೆ ಆದರೆ ಸಂಕಟದಲಿ ಮೊರೆಯಿಡಲು, ಪರದಿಂದ ಕಿವಿಗೊಟ್ಟಿರವರಿಗೆ! ರಕ್ಷಕರನು ಕಳುಹಿಸಿದಿರಿ ಕರುಣಾತಿಶಯದಿಂದ ಈ ಪರಿ ಬಿಡಿಸಿದಿರಿ ವಿರೋಧಿಗಳ ಕೈಯಿಂದ.</verse>
				<verse number="28">ಶಾಂತಿ ಸವಿದದ್ದೇ ದ್ರೋಹಿಗಳಾಗಿ ನಡೆದರು ಮತ್ತೆ ನೀವಿತ್ತಿರವರನು ದೊರೆತನ ನಡೆಸುವ ವೈರಿಗಳ ಕೈಗೆ. ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು, ಆಲಿಸಿದಿರಿ ಪರದಿಂದ ರಕ್ಷಿಸಿದಿರಿ ಪದೇ ಪದೇ ಅಪರಿಮಿತ ಕರುಣೆಯಿಂದ.</verse>
				<verse number="29">‘ಧರ್ಮೋಪದೇಶಕೆ ಮರಳಿ ಮನವೊಲಿದು ಬನ್ನಿ’ ಎಂದು ನೀವೆಷ್ಟೋ ಸಾರಿ ಅವರನ್ನೆಚ್ಚರಿಸಿದಿರಿ ಖಚಿತವಾಗಿ ಆದರೂ ಆಲಿಸಲಿಲ್ಲಾ ಗರ್ವಿಗಳು, ಅವಿಧೇಯರು, ಪಾಪಿಗಳು. ಜೀವಾಧಾರವಾದ ನಿಮ್ಮಾ ವಿಧಿನಿಯಮಗಳನು ಮೀರಿದರು ಮೊಂಡುಬಿದ್ದು ನಿಮ್ಮ ನೊಗಕೆ ಕೊರಳೊಡ್ಡದೆ ಹೋದರು.</verse>
				<verse number="30">ತಾಳಿಕೊಂಡಿರಿ ಅವರನು ನೀವೆಷ್ಟೋ ವರ್ಷಗಳ ತನಕ ಎಚ್ಚರಿಸಿದಿರಿ ನಿಮ್ಮಾತ್ಮ ಪ್ರೇರಣೆಯಿಂದ, ಪ್ರವಾದಿಗಳ ಮೂಲಕ ಕಿವಿಗೊಡದಾ ಜನರನು ಹೊರದೂಡಿದಿರಿ ಅನ್ಯದೇಶದ ಪರಿಯಂತ.</verse>
				<verse number="31">ಆದರೆ, ನೀವು ದಯಾಪೂರಿತರು, ಕರುಣಾಮಯ ದೇವರು! ನಿಮ್ಮ ಮಹಾಕೃಪಾನುಸಾರ, ಕೈಬಿಡಲಿಲ್ಲ, ನಾಶಮಾಡಲಿಲ್ಲ ಅವರನು.</verse>
				<verse number="32">ಓ ನಮ್ಮ ದೇವರೇ, ನೀವು ಮಹೋನ್ನತರು, ಶಕ್ತಿಸಾಮರ್ಥ್ಯರು, ಭಯಭಕ್ತಿಗೆ ಪಾತ್ರರು, ಕೃಪಾವಾಗ್ದಾನಗಳ ನೆರವೇರಿಸುವವರು. ಅಲ್ಪವೆಂದೆಣಿಸಬೇಡಿ - ನಮ್ಮ ರಾಜರು, ರಾಜ್ಯಪಾಲರು. ಯಾಜಕರು, ಪ್ರವಾದಿಗಳು, ಹಿರಿಯರು, ಪ್ರಜೆಗಳು ಸಹಿಸಬೇಕಾಗಿಬಂದಿರುವ ಈ ಕಷ್ಟಕಾರ್ಪಣ್ಯಗಳನು.</verse>
				<verse number="33">ನಮ್ಮ ಮೇಲೆ ನೀವೆಷ್ಟೇ ಕೇಡನು ಬರಮಾಡಿದರೂ ನೀವು ನ್ಯಾಯವಂತರು, ಸತ್ಯಸ್ವರೂಪಿ, ನಾವೋ ದುಷ್ಟರು!</verse>
				<verse number="34">ನಮ್ಮ ಅರಸರು, ರಾಜ್ಯಪಾಲರು, ಯಾಜಕರು, ಹಿರಿಯರು ಅನುಸರಿಸಲಿಲ್ಲ, ನಿಮ್ಮಾಜ್ಞೆಯನು, ಧರ್ಮೋಪದೇಶವನು. ಲಕ್ಷಿಸಲಿಲ್ಲ ನೀವಿತ್ತ ಎಚ್ಚರಿಕೆಯ ಮಾತುಗಳನು.</verse>
				<verse number="35">ಅವರಿದ್ದರು ನೀವೇ ಅನುಗ್ರಹಿಸಿದ ಸ್ವರಾಜ್ಯದಲಿ ನಲಿದಾಡಿದರು ನೀವು ಕರುಣಿಸದ ಸಮೃದ್ಧಿಯಲಿ ವಾಸಿಸಿದರು ಸಾರವತ್ತಾದ ಸವಿಸ್ತಾರ ನಾಡಿನಲಿ. ಆದರೂ ಮಾಡಲಿಲ್ಲ ನಿಮ್ಮ ಸೇವೆ, ಬಿಡಲಿಲ್ಲ ತಮ್ಮ ದುರ್ನಡತೆ ನಮಗೊದಗಿರುವ ಗುಲಾಮಗಿರಿ, ಇದರ ಪರಿಣಾಮವಲ್ಲವೆ?</verse>
				<verse number="36">ನಮ್ಮ ಪಿತೃಗಳಿಗೆ ನೀವೆಂದಿರಿ ‘ಸವಿಯಿರಿ ನಾಡಿನ ಫಲವನು, ಸಮೃದ್ಧಿಯನು’. ಆದರಿದೋ ಅನುಭವಿಸುತ್ತಿರುವೆವು ಈ ನಾಡಿನಲಿ ಗುಲಾಮಗಿರಿಯನು!</verse>
				<verse number="37">ನಮ್ಮ ಪಾಪದ ನಿಮಿತ್ತ ಅಧೀನರಾಗಿಸಿದಿರಿ ಅನ್ಯರಾಜರಿಗೆ ಈ ನಾಡಿನ ಸಿರಿಸಂಪತ್ತು ಹರಿದುಹೋಗುತ್ತಿದೆ ಆ ಅರಸರಿಗೆ ನಮ್ಮೊಡಲು, ದನಕರುಗಳು, ಈಡಾಗಿವೆ ಅವರ ದಬ್ಬಾಳಿಕೆಗೆ ಅಕಟಕಟ, ನಾವು ಸಿಕ್ಕಿಕೊಂಡಿದ್ದೇವೆ, ಮಹಾಸಂಕಟಕೆ!”</verse>
				<verse number="38">ಈ ಎಲ್ಲ ಕಾರಣಗಳಿಂದ ನಾವು ಲೇಖನ ರೂಪವಾದ ಪ್ರತಿಜ್ಞೆಯನ್ನು ಮಾಡಿದೆವು. ಅದಕ್ಕೆ ನಮ್ಮ ಮುಖಂಡರು, ಲೇವಿಯರು ಹಾಗು ಯಾಜಕರು ಸಹಿಮಾಡಿ, ಮುದ್ರೆಹಾಕಿದರು.</verse>
			</chapter>
			<chapter number="10">
				<verse number="1">ಸಹಿಮಾಡಿದವರು ಇವರು: ಹಕಲ್ಯನ ಮಗ ನೆಹೆಮೀಯನೆಂಬ ದೇಶಾಧಿಪತಿ;</verse>
				<verse number="2">ಚಿದ್ಕೀಯ, ಸೆರಾಯ, ಅಜರ್ಯ, ಯೆರೆಮೀಯ,</verse>
				<verse number="3">ಪಷ್ಹೂರ್, ಅಮರ್ಯ, ಮಲ್ಕೀಯ,</verse>
				<verse number="4">ಹಟ್ಟೂಷ್, ಶೆಬನ್ಯ, ಮಲ್ಲೂಕ್, ಹಾರಿಮ್, ಮೆರೇಮೋತ್,</verse>
				<verse number="5"></verse>
				<verse number="6">ಓಬದ್ಯ, ದಾನೀಯೇಲ್, ಗಿನ್ನೆತೋನ್,</verse>
				<verse number="7">ಬಾರೂಕ್, ಮೆಷುಲ್ಲಾಮ್, ಅಬೀಯ, ಮಿಯ್ಯಾಮೀನ್,</verse>
				<verse number="8">ಮಾಜ್ಯ, ಬಿಲ್ಗೈ, ಶೆಮಾಯ ಎಂಬ ಯಾಜಕರು;</verse>
				<verse number="9">ಲೇವಿಯರಲ್ಲಿ ಅಜನ್ಯನ ಮಗ ಯೇಷೂವ, ಹೇನಾದಾದ್ ವಂಶದವನಾದ ಬೆನ್ನೂಯ್, ಕದ್ಮೀಯೇಲ್ ಎಂಬವರು;</verse>
				<verse number="10">ಇವರ ಬಂಧುಗಳಾದ ಶೆಬನ್ಯ,</verse>
				<verse number="11">ಹೋದೀಯ, ಕೆಲೀಟ, ಪೆಲಾಯ, ಹಾನಾನ್, ಮೀಕ,</verse>
				<verse number="12">ರೆಹೋಬ್, ಹಷಬ್ಯ, ಜಕ್ಕೂರ್, ಶೇರೇಬ್ಯ, ಶೆಬನ್ಯ,</verse>
				<verse number="13">ಹೋದೀಯ, ಬಾನೀ, ಬೆನೀನೂ ಎಂಬವರು.</verse>
				<verse number="14">ಜನಪ್ರಧಾನರಲ್ಲಿ ಪರೋಷ್, ಪಹತ್ ಮೋವಾಬ್,</verse>
				<verse number="15">ಏಲಾಮ್, ಜತ್ತೂ, ಬಾನೀ, ಬುನ್ನಿ, ಅಜ್ಗಾದ್,</verse>
				<verse number="16">ಬೇಬೈ, ಅದೋನೀಯ, ಬಿಗ್ವೈ, ಆದೀನ್, ಆಟೇರ್,</verse>
				<verse number="17"></verse>
				<verse number="18">ಹಿಜ್ಕೀಯ, ಅಜ್ಜೂರ್, ಹೋದೀಯ, ಹಾಷುಮ್,</verse>
				<verse number="19">ಬೇಚೈ, ಹಾರೀಫ್, ಅನಾತೋತ್, ನೇಬೈ, ಮಗ್ಪೀಯಾಷ್,</verse>
				<verse number="20"></verse>
				<verse number="21">ಮೆಷುಲ್ಲಾಮ್, ಹೇಜೀರ್, ಮೆಷೇಜಬೇಲ್,</verse>
				<verse number="22">ಚಾದೋಕ್, ಯದ್ದೂವ, ಪೆಲಟ್ಯ, ಹಾನಾನ್, ಆನಾಯ, ಹೋಷೇಯ,</verse>
				<verse number="23">ಹನನ್ಯ, ಹಷ್ಷೂಬ್,</verse>
				<verse number="24">ಹಲೋಹೇಷ್, ಪಿಲ್ಹ, ಶೋಬೇಕ್, ರೆಹೂಮ್,</verse>
				<verse number="25"></verse>
				<verse number="26">ಹಷಬ್ನ, ಮಾಸೇಯ, ಅಹೀಯ,</verse>
				<verse number="27">ಹಾನಾನ್, ಆನಾನ್, ಮಲ್ಲೂಕ್, ಹಾರೀಮ್, ಬಾನ ಎಂಬವರು.</verse>
				<verse number="28">ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ದೇವಸ್ಥಾನ ಪರಿಚಾರಕರು, ಉಳಿದ ಜನರು, ಇವರಲ್ಲಿ ದೇವರ ಧರ್ಮೋಪದೇಶದ ನಿಮಿತ್ತ ಅನ್ಯದೇಶದವರ ಗೊಡವೆಯನ್ನು ತೊರೆದುಬಿಟ್ಟವರು, ತಮ್ಮ ತಮ್ಮ ಹೆಂಡತಿಯರು, ಗ್ರಹಿಸಲು ಶಕ್ತರಾದ ಗಂಡುಹೆಣ್ಣು ಮಕ್ಕಳು ಇವರೊಡನೆ ಬಂದು,</verse>
				<verse number="29">ಮುಖಂಡರಾದ ತಮ್ಮ ಸಹೋದರರನ್ನು ಸೇರಿಕೊಂಡು, ದೇವರ ದಾಸ ಮೋಶೆಯ ಮುಖಾಂತರ ಕೊಡಲಾದ ದೇವರ ಧರ್ಮೋಪದೇಶವನ್ನು ತಾವು ಅನುಸರಿಸಿ, ತಮ್ಮ ಸರ್ವೇಶ್ವರನಾದ ದೇವರ ಎಲ್ಲ ಆಜ್ಞಾನಿಯಮವಿಧಿಗಳನ್ನು ಕೈಗೊಂಡು ನಡೆಯುವುದಾಗಿ, ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು:</verse>
				<verse number="30">‘ದೇಶನಿವಾಸಿಗಳಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಿಲ್ಲ; ನಮ್ಮ ಮಕ್ಕಳಿಗೆ ಅವರಿಂದ ಹೆಣ್ಣು ತೆಗೆದುಕೊಳ್ಳುವುದಿಲ್ಲ;</verse>
				<verse number="31">ದೇಶನಿವಾಸಿಗಳು ಮಾರುವುದಕ್ಕೆ ತರುವ ಯಾವ ಸರಕುಗಳನ್ನೂ ಧಾನ್ಯವನ್ನೂ ಸಬ್ಬತ್‍ ಮೊದಲಾದ ಪರಿಶುದ್ಧ ದಿನಗಳಲ್ಲಿ ಕೊಂಡುಕೊಳ್ಳುವುದಿಲ್ಲ; ಪ್ರತಿಯೊಂದು ಏಳನೆಯ ವರ್ಷ ಭೂಮಿಯ ಸಾಗುವಳಿಯನ್ನೂ, ಇತರರು ಕೊಡಬೇಕಾದ ಸಾಲವನ್ನೂ ಬಿಟ್ಟುಬಿಡುತ್ತೇವೆ;</verse>
				<verse number="32">ವರ್ಷಕ್ಕೆ ಐದು ಗ್ರಾಂ ಬೆಳ್ಳಿಯನ್ನು ದೇವಾಲಯ ಸೇವೆಗಾಗಿ ಕೊಡಬೇಕೆಂಬ ಕರ್ತವ್ಯವನ್ನು ವಹಿಸಿಕೊಳ್ಳುತ್ತೇವೆ;</verse>
				<verse number="33">ಈ ನಾಣ್ಯ, ದೇವರ ಸನ್ನಿಧಿಯಲ್ಲಿಡತಕ್ಕ ರೊಟ್ಟಿ, ನಿತ್ಯ ಧಾನ್ಯ, ನೈವೇದ್ಯ ಇವುಗಳಿಗಾಗಿ; ಹಾಗು ನಿತ್ಯ ದಹನಬಲಿ ಮತ್ತು ಸಬ್ಬತ್‍ದಿನ, ಅಮಾವಾಸ್ಯೆ, ಜಾತ್ರೆ ಇವುಗಳಲ್ಲಿ ಮಾಡತಕ್ಕ ದಹನಬಲಿ, ಶಾಂತಿಸಮಾಧಾನ ಬಲಿ, ಇಸ್ರಯೇಲರ ದೋಷಪರಿಹಾರಾರ್ಥವಾದ ಬಲಿ, ಇವುಗಳಿಗಾಗಿ ಹಾಗು ನಮ್ಮ ದೇವಾಲಯ ಸಂಬಂಧವಾದ ಬೇರೆ ಎಲ್ಲ ಕೆಲಸಕಾರ್ಯಗಳಿಗಾಗಿ ವೆಚ್ಚವಾಗಬೇಕು;</verse>
				<verse number="34">ಧರ್ಮಶಾಸ್ತ್ರವಿಧಿಗನುಸಾರ, ನಮ್ಮ ದೇವರಾದ ಸರ್ವೇಶ್ವರನ ಬಲಿಪೀಠದ ಮೇಲೆ ಬೆಂಕಿಯುರಿಸುವುದಕ್ಕಾಗಿ ವರ್ಷವರ್ಷವೂ ನೇಮಿತವಾದ ಕಾಲಗಳಲ್ಲಿ, ನಮ್ಮ ದೇವಾಲಯಕ್ಕೆ ಸೌದೆ ದೊರಕುವ ಹಾಗೆ ಆಯಾ ಗೋತ್ರಾನುಸಾರ ಕಟ್ಟಿಗೆ ದಾನಮಾಡತಕ್ಕವರು ಇಂತಿಂಥವರು ಎಂಬುದನ್ನು ಯಾಜಕರೂ ಲೇವಿಯರೂ ಜನಸಾಮಾನ್ಯರೂ ಸೇರಿ, ನಮ್ಮಲ್ಲೇ ಚೀಟುಹಾಕಿ ಗೊತ್ತುಮಾಡುತ್ತೇವೆ;</verse>
				<verse number="35">ನಮ್ಮ ಭೂಮಿಯ ಮತ್ತು ಎಲ್ಲ ಹಣ್ಣಿನಮರಗಳ ಪ್ರಥಮ ಫಲವನ್ನು ಪ್ರತೀ ವರ್ಷವೂ ಸರ್ವೇಶ್ವರನ ಆಲಯಕ್ಕೆ ತಂದುಕೊಡುತ್ತೇವೆ;</verse>
				<verse number="36">ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ ನಮ್ಮ ಪ್ರಾಣಿಪಶುಗಳ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರ ವಿಧಿಗನುಸಾರವಾಗಿ ನಡೆಯುತ್ತೇವೆ; ನಮ್ಮ ಚೊಚ್ಚಲ ಕರುಗಳನ್ನೂ ಚೊಚ್ಚಲ ಆಡುಕುರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಸೇವೆಯಲ್ಲಿ ಇರುವ ಯಾಜಕರಿಗೆ ಕೊಡುತ್ತೇವೆ;</verse>
				<verse number="37">ನಾವು ದೇವರಿಗಾಗಿ ಪ್ರತ್ಯೇಕಿಸಿಡತಕ್ಕ ಪ್ರಥಮ ಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ, ಮೊದಲಾದವುಗಳನ್ನು ಯಾಜಕರಿಗಾಗಿ ನಮ್ಮ ದೇವಾಲಯದ ಕೊಠಡಿಗಳಲ್ಲಿ ತಂದಿಡುತ್ತೇವೆ; ನಮ್ಮ ಭೂಮಿಯ ಆದಾಯದ ದಶಮಾಂಶವು ಲೇವಿಯರದಾಗಬೇಕು; ಲೇವಿಯರು ತಾವೇ ಬಂದು ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಕೂಡಿಸಬೇಕು;</verse>
				<verse number="38">ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿದ ಭಾಗದ ದಶಮಾಂಶವನ್ನು ದೇವಾಲಯದ ಬಂಡಾರದಕೊಠಡಿಗಳಲ್ಲಿಡಬೇಕು;</verse>
				<verse number="39">ಇಸ್ರಯೇಲರೂ ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದೇವರಿಗಾಗಿ ಪ್ರತ್ಯೇಕಿಸತಕ್ಕ ಭಾಗಗಳನ್ನು ತಂದು, ಸೇವೆ ನಡೆಸುತ್ತಿರುವ ಯಾಜಕರು, ದ್ವಾರಪಾಲಕರು, ಗಾಯಕರು ಇವರೂ, ಪವಿತ್ರಾಲಯದ ಪಾತ್ರೆಗಳೂ, ಇರುವ ಕೊಠಡಿಗಳಲ್ಲಿ ಇಡಬೇಕು; ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವುದಿಲ್ಲ,’ ಎಂದು ಬರೆದುಕೊಟ್ಟರು.</verse>
			</chapter>
			<chapter number="11">
				<verse number="1">ಇಸ್ರಯೇಲರ ಪ್ರಮುಖರು ಮಾತ್ರ ಜೆರುಸಲೇಮಿನಲ್ಲಿ ವಾಸಿಸುತ್ತಿದ್ದರು. ಉಳಿದ ಜನರೊಳಗೆ ಹತ್ತುಹತ್ತು ಮಂದಿಯಲ್ಲಿ ಒಂಬತ್ತುಮಂದಿ ತಮ್ಮ ತಮ್ಮ ಊರುಗಳಲ್ಲಿ ಇದ್ದುಕೊಂಡು, ಒಬ್ಬನು ಪವಿತ್ರ ನಗರವಾದ ಜೆರುಸಲೇಮಿನಲ್ಲಿ ವಾಸಿಸುವುದಕ್ಕಾಗಿ, ಅಲ್ಲಿಗೆ ಬರುವಂತೆ ಚೀಟುಹಾಕಿ ಗೊತ್ತುಮಾಡಿದರು.</verse>
				<verse number="2">ಮತ್ತು ಸ್ವಂತ ಇಚ್ಛೆಯಿಂದ ಜೆರುಸಲೇಮಿನಲ್ಲಿ ವಾಸಿಸುವುದಕ್ಕೆ ಮನಸ್ಸು ಮಾಡಿದಂಥವರನ್ನು ಜನರು ಆಶೀರ್ವದಿಸಿದರು.</verse>
				<verse number="3">ಯೆಹೂದ ಕುಲದವರಲ್ಲಿ - ಒಬ್ಬನು ಅತಾಯ; ಇವನು ಉಜ್ಜೀಯನ ಮಗ; ಇವನು ಜೆಕರ್ಯನ ಮಗ; ಇವನು ಅಮರ್ಯನ ಮಗ; ಇವನು ಶೆಫಟ್ಯನ ಮಗ; ಇವನು ಮಹಲಲೇಲನ ಮಗ; ಇವನು ಪೆರೆಚ್ ಸಂತಾನದವನು.</verse>
				<verse number="4"></verse>
				<verse number="5">ಇನ್ನೊಬ್ಬನು ಮಾಸೇಯ; ಇವನು ಬಾರೂಕನ ಮಗ; ಇವನು ಕೊಲ್ಹೋಜೆಯ ಮಗ; ಇವನು ಹಜಾಯನ ಮಗ; ಇವನು ಆದಾಯನ ಮಗ; ಇವನು ಯೋಯಾರೀಬನ ಮಗ; ಇವನು ಜೆಕರ್ಯನ ಮಗ; ಇವನು ಶೇಲಹನ ಸಂತಾನದವನು.</verse>
				<verse number="6">ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ಪೆರೆಚ್ ಸಂತಾನದ ರಣವೀರರು ನಾನೂರ ಅರವತ್ತೆಂಟು ಮಂದಿ</verse>
				<verse number="7">ಬೆನ್ಯಾಮೀನ್ ಕುಲದವರಲ್ಲಿ - ಸಲ್ಲು; ಇವನು ಮೆಷುಲ್ಲಾಮನ ಮಗ; ಇವನು ಯೋವೇದನ ಮಗ; ಇವನು ಪೆದಾಯನ ಮಗ; ಇವನು ಕೋಲಾಯನ ಮಗ; ಇವನು ಮಾಸೇಯನ ಮಗ; ಇವನು ಈತೀಯೇಲನ ಮಗ; ಇವನು ಯೆಶಾಯನ ಮಗ.</verse>
				<verse number="8">ರಣವೀರರಾದ ಇವನ ಬಂಧುಜನರು ಒಂಬೈನೂರಿಪ್ಪತ್ತೆಂಟು ಮಂದಿ.</verse>
				<verse number="9">ಜೆಕ್ರಿಯ ಮಗನಾದ ಯೋವೇಲನು ಇವರ ನಾಯಕ; ಹಸ್ಸೆನೂವನ ಮಗನಾದ ಯೆಹೂದನು ಎರಡನೆಯ ಪುರಾಧಿಕಾರಿ.</verse>
				<verse number="10">ಯಾಜಕರಲ್ಲಿ - ಯೆದಾಯ, ಯೋಯಾರೀಬ್, ಯಾಕೀನ್, ಅಹೀಟೂಬನ</verse>
				<verse number="11">ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯೂ ಆದ ಸೆರಾಯ, ಇವರು.</verse>
				<verse number="12">ಇವರೂ ದೇವಾಲಯದ ಸೇವೆ ನಡೆಸುತ್ತಿದ್ದ ಇವರ ಬಂಧುಗಳೂ ಎಂಟುನೂರಿಪ್ಪತ್ತ ಎರಡು ಮಂದಿ. ಇವರಲ್ಲದೆ ಅದಾಯನೆಂಬವನು ಇನ್ನೊಬ್ಬನು. ಇವನು ಯೆರೋಹಾಮನ ಮಗ; ಇವನು ಪೆಲಲ್ಯನ ಮಗ; ಇವನು ಅಮ್ಚೀಯ ಮಗ; ಇವನು ಜೆಕರ್ಯನ ಮಗ; ಇವನು ಪಷ್ಹೂರನ ಮಗ; ಇವನು ಮಲ್ಕೀಯನ ಮಗ.</verse>
				<verse number="13">ಗೋತ್ರಪ್ರಧಾನರಾದ ಈ ಅದಾಯನ ಬಂಧುಗಳು ಇನ್ನೂರ ನಾಲ್ವತ್ತೆರಡು ಮಂದಿ. ಅಮಷ್ಷೈ ಎಂಬುವನು ಮತ್ತೊಬ್ಬನು. ಇವನು ಅಜರೇಲನ ಮಗ; ಇವನು ಅಹಜೈಯ ಮಗ; ಇವನು ಮೆಷಿಲ್ಲೇಮೋತನ ಮಗ; ಇವನು ಇಮ್ಮೇರನ ಮಗ;</verse>
				<verse number="14">ರಣವೀರರಾಗಿದ್ದ ಈ ಅಮಷ್ಷೈಯ ಬಂಧುಗಳು ನೂರಿಪ್ಪತ್ತೆಂಟು ಮಂದಿ. ಹಗ್ಗೆದೋಲೀಮನ ಮಗನಾದ ಜಬ್ದೀಯೇಲನು ಇವರ ನಾಯಕ.</verse>
				<verse number="15">ಲೇವಿಯರಲ್ಲಿ - ಹಷ್ಷೂಬನ ಮಗನೂ ಅಜ್ರೀಕಾಮನ ಮೊಮ್ಮಗನೂ ಹಷಬ್ಯನ ಮರಿಮಗನೂ ಬುನ್ನೀ ವಂಶದವನೂ ಆದ ಶೆಮಾಯನು;</verse>
				<verse number="16">ಲೇವಿ ಗೋತ್ರಪ್ರಧಾನರಲ್ಲಿ ದೇವಾಲಯದ ಲೌಕಿಕ ಕಾರ್ಯಗಳ ಮೇಲ್ವಿಚಾರಕರಾದ ಶಬ್ಬೆತೈ, ಯೋಜಾಬಾದ್ ಎಂಬವರು;</verse>
				<verse number="17">ಮೀಕನ ಮಗ ಜಬ್ದೀಯ ಮೊಮ್ಮಗ, ಆಸಾಫನ ಮರಿಮಗ ಪ್ರಾರ್ಥನಾ ಸಮಯದಲ್ಲಿ ಕೃತಜ್ಞತಾ ಸ್ತುತಿಮಾಡಿರಿ ಎಂದು ಹೇಳಿ ಭಜಕರನ್ನು ನಡೆಸುತ್ತಿದ್ದ ಮತ್ತನ್ಯ, ತನ್ನ ಬಂಧುಗಳಲ್ಲಿ‍ ದ್ವಿತೀಯ ಸ್ಥಾನದವನಾದ ಬಕ್ಬುಕ್ಯ, ಶಮ್ಮೂವನ ಮಗನು; ಗಾಲಾಲನ ಮೊಮ್ಮಗನು, ಯೆದೂತೂನನ ಮರಿಮಗನು ಆದ ಅಬ್ದ ಎಂಬವರು.</verse>
				<verse number="18">ಪರಿಶುದ್ಧ ನಗರದಲ್ಲಿದ್ದ ಎಲ್ಲ ಲೇವಿಯರು ಇನ್ನೂರ ಎಂಬತ್ತನಾಲ್ಕುಮಂದಿ.</verse>
				<verse number="19">ದ್ವಾರಪಾಲಕರಲ್ಲಿ - ಅಕ್ಕೂಬ್‍ ಟಲ್ಮೋನರೂ ಬಾಗಿಲುಗಳನ್ನು ಕಾಯುತ್ತಿದ್ದ ಇವರ ಬಂಧುಗಳೂ; ಒಟ್ಟು ನೂರೆಪ್ಪತ್ತೆರಡು ಮಂದಿ.</verse>
				<verse number="20">ಉಳಿದ ಇಸ್ರಯೇಲರು, ಯಾಜಕರು ಹಾಗು ಲೇವಿಯರು ತಮ್ಮ ತಮ್ಮ ಸೊತ್ತುಗಳಿದ್ದ ಜುದೇಯದ ಎಲ್ಲ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.</verse>
				<verse number="21">ದೇವಸ್ಥಾನದ ದಾಸರು ಓಪೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದರು. ಚೀಹ, ಗಿಷ್ಟ ಎಂಬವರು ಇವರ ನಾಯಕರು.</verse>
				<verse number="22">ದೇವಾಲಯ ಸೇವಾಸಂಬಂಧದಲ್ಲಿ ಗಾಯಕರಾದ ಆಸಾಫ್ಯರಿಗೆ ಸೇರಿದ ಬಾನೀಯ ಮಗನೂ ಹಷಬ್ಯನ ಮೊಮ್ಮಗನೂ ಮತ್ತನ್ಯನ ಮರಿಮಗನೂ ಮೀಕನ ವಂಶದವನೂ ಆದ ಉಜ್ಜೀಯು ಜೆರುಸಲೇಮಿನಲ್ಲಿದ್ದ ಲೇವಿಯರ ನಾಯಕನು.</verse>
				<verse number="23">ಇವರ ಮತ್ತು ಗಾಯಕರ ಅನುದಿನದ ಕರ್ತವ್ಯಾಂಶಗಳ ವಿಷಯವಾಗಿ ರಾಜನಿಯಮವಿತ್ತು.</verse>
				<verse number="24">ಮೆಷೇಜಬೇಲನ ಮಗನೂ ಜೆರಹನ ಸಂತಾನದವನೂ ಯೆಹೂದ ಕುಲದವನೂ ಆದ ಪೆತಹ್ಯನು ಪ್ರಜೆಗಳ ಎಲ್ಲ ಕಾರ್ಯಗಳ ಸಂಬಂಧದಲ್ಲಿ ರಾಜನ ಕಾರಭಾರಿಯಾಗಿದ್ದನು.</verse>
				<verse number="25">ಹೊಲಗದ್ದೆಗಳಿದ್ದವರು ವಾಸಿಸುತ್ತಿದ್ದ ಊರುಗಳು - ಕಿರ್ಯತರ್ಬ, ದೀಬೋನ್, ಯೆಕಬ್ಜೆಯೇಲ್, ಇವುಗಳೂ ಇವುಗಳ ಗ್ರಾಮಗಳೂ;</verse>
				<verse number="26">ಯೇಷೂವ, ಮೋಲಾದ,</verse>
				<verse number="27">ಬೇತ್ಪೆಲೆಟ್, ಹಚರ್ಷೂವಲ್ ಇವುಗಳೂ ಬೇರ್ಷೆಬವೂ ಅದರ ಗ್ರಾಮಗಳೂ;</verse>
				<verse number="28">ಚಿಕ್ಲಗ್ ಊರೂ ಮೆಕೋನವೂ ಅದರ ಗ್ರಾಮಗಳೂ;</verse>
				<verse number="29">ಏನ್ರಿಮ್ಮೋನ್, ಚೊರ್ರ,</verse>
				<verse number="30">ಯರ್ಮೂತ್ ಇವುಗಳೂ ಇವುಗಳ ಗ್ರಾಮಗಳೂ, ಲಾಕೀಷ್ ಊರೂ ಇದರ ಪ್ರಾಂತ್ಯಗಳೂ, ಅಜೇಕವೂ ಅದರ ಗ್ರಾಮಗಳೂ; ಇವು ಯೆಹೂದ ಕುಲದವರ ನಿವಾಸಸ್ಥಾನಗಳು. ಅವರು ಬೇರ್ಷೆಬದಿಂದ ಹಿನ್ನೋಮ್ ಕಣಿವೆಯವರೆಗೂ ವಾಸಿಸುತ್ತಿದ್ದರು.</verse>
				<verse number="31">ಗೆಬ, ಮಿಕ್ಮಾಷ್, ಅಯ್ಯಾ, ಗ್ರಾಮಸಹಿತವಾದ ಬೇತೇಲ್ ಎಂಬ ಊರುಗಳು;</verse>
				<verse number="32">ಅನಾತೋತ್, ನೋಬ್,</verse>
				<verse number="33">ಅನನ್ಯ, ಹಾಜೋರ್, ರಾಮಾ, ಗಿತ್ತಯೆಮ್,</verse>
				<verse number="34">ಹಾದೀದ್, ಚೆಬೋಯೀಮ್, ನೆಬಲ್ಲಾಟ್, ಲೋದ್,</verse>
				<verse number="35">ಓನೋ, ಗೇಹರಾಷೀಮ್ ಎಂಬ ಊರುಗಳು, ಇವು ಬೆನ್ಯಾಮೀನ್ ಕುಲದವರ ನಿವಾಸಸ್ಥಾನಗಳು.</verse>
				<verse number="36">ಲೇವಿಯರಲ್ಲಿ ಕೆಲವು ವರ್ಗಗಳವರು ಯೆಹೂದ್ಯರಲ್ಲಿ, ಕೆಲವರು ಬೆನ್ಯಾಮೀನ್ಯರಲ್ಲಿ, ವಾಸಿಸುತ್ತಿದ್ದರು.</verse>
			</chapter>
			<chapter number="12">
				<verse number="1">ಶೆಯಲ್ತೀಯೇಲನ ಮಗ ಜೆರುಬ್ಬಾಬೆಲ್ ಹಾಗು ಯೇಷೂವ ಇವರೊಡನೆ ಜುದೇಯ ನಾಡಿಗೆ ಹಿಂದಿರುಗಿ ಬಂದ ಯಾಜಕರು ಮತ್ತು ಲೇವಿಯರ ಪಟ್ಟಿ: ಯಾಜಕರು -</verse>
				<verse number="2">ಸೆರಾಯ, ಯೆರೆಮೀಯ, ಎಜ್ರ, ಅಮರ್ಯ,</verse>
				<verse number="3">ಮಲ್ಲೂಕ್, ಹಟ್ಟೂಷ್, ಶೆಕನ್ಯ, ರೆಹುಮ್, ಮೆರೇಮೋತ್, ಇದ್ದೋ,</verse>
				<verse number="4">ಗಿನ್ನೆತೋನ್, ಅಬೇಯ,</verse>
				<verse number="5">ಮಿಯ್ಯಾಮೀನ್, ಮಾದ್ಯ, ಬಿಲ್ಗ, ಶೆಮಾಯ,</verse>
				<verse number="6"></verse>
				<verse number="7">ಯೋಯಾರೀಬ್, ಯೆದಾಯ, ಸಲ್ಲೂ, ಆಮೋಕ್, ಹಿಲ್ಕೀಯ, ಯೆದಾಯ. ಇವರು ಯೇಷೂವನ ಕಾಲದಲ್ಲಿ ಯಾಜಕರ ಮತ್ತು ಅವರ ಬಂಧುಗಳ ಮುಖಂಡರಾಗಿದ್ದರು.</verse>
				<verse number="8">ಲೇವಿಯರು - ಯೇಷೂವ, ಬೆನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ್ಯ, ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಭಜನ ನಾಯಕರು.</verse>
				<verse number="9">ಇವರ ಸಹೋದರರಾದ ಬಕ್ಬುಕ್ಯ, ಉನ್ನೀ ಎಂಬವರು ಭಜನ ಸೇವೆಯಲ್ಲಿ ಇವರೆದುರಿಗೆ ನಿಂತು ಹಾಡುವವರು.</verse>
				<verse number="10">ಯೇಷೂವನಿಗೆ ಯೋಯಾಕೀಮನು, ಯೋಯಾಕೀಮನಿಗೆ ಎಲ್ಯಾಷೀಬನು, ಎಲ್ಯಾಷೀಬನಿಗೆ ಯೋಯಾದನು,</verse>
				<verse number="11">ಯೋಯಾದನಿಗೆ ಯೋನಾತಾನನು, ಯೋನಾತಾನನಿಗೆ ಯದ್ದೂವನು ಹುಟ್ಟಿದರು.</verse>
				<verse number="12">ಯೋಯಾಕೀಮನ ಕಾಲದಲ್ಲಿ ಯಾಜಕರಾಗಿದ್ದ ಗೋತ್ರಪ್ರಧಾನರು - [ಯಾಜಕ] — [ಗೋತ್ರ] ಮೆರಾಯ — ಸೆರಾಯ ಹನನ್ಯ — ಯೆರೆಮೀಯ ಮೆಷುಲ್ಲಾಮ್ — ಎಜ್ರ ಯೆಹೋಹಾನಾನ್ — ಅಮರ್ಯ ಯೋನಾತಾನ್ — ಮಲ್ಲೂಕಿ ಜೋಸೇಫ್ — ಶೆಬನ್ಯ ಅದ್ನ — ಹಾರಿಮ ಹೆಲ್ಕೈ — ಮೆರಾಯೋತ ಜಕರ್ಯ — ಇದ್ದೋ ಮೆಷುಲ್ಲಾಮ್ — ಗಿನ್ನೆತೋನ ಜೆಕ್ರೀ — ಅಬೀಯ ಪಿಲ್ಟೈ — ಮಿನ್ಯಾಮೀನ್ ಮತ್ತು ಮೋವದ್ಯ ಶಮ್ಮೂವ — ಬಿಲ್ಗಾ ಯೆಹೋನಾತಾನ್ — ಶೆಮಾಯ ಮತ್ತೆನೈ — ಯೋಯಾರೀಬ ಉಜ್ಜೀ — ಯೆದಾಯ ಕಲ್ಲೈ — ಸಲ್ಲೈ ಏಬೆರ್ — ಆಮೋಕ ಹಷಬ್ಯ — ಹಿಲ್ಕೀಯ ನೆತನೇಲ್ — ಯೆದಾಯ</verse>
				<verse number="13"></verse>
				<verse number="14"></verse>
				<verse number="15"></verse>
				<verse number="16"></verse>
				<verse number="17"></verse>
				<verse number="18"></verse>
				<verse number="19"></verse>
				<verse number="20"></verse>
				<verse number="21"></verse>
				<verse number="22">ಎಲ್ಯಾಷೀಬ್, ಯೋಯಾದ, ಯೋಹಾನಾನ್, ಯದ್ದೂವ ಇವರ ಕಾಲಗಳಲ್ಲಿದ್ದ ಲೇವಿಯ ಗೋತ್ರಪ್ರಧಾನರ ಪಟ್ಟಿ ಹಾಗು ಪರ್ಷಿಯಾದ ದಾರ್ಯಾವೆಷ ರಾಜನ ಆಳ್ವಿಕೆಯವರೆಗಿದ್ದ ಯಾಜಕರ ಪಟ್ಟಿಯೂ ಇದೆ.</verse>
				<verse number="23">ಎಲ್ಯಾಷೀಬನ ಮೊಮ್ಮಗನಾದ ಯೋಹಾನಾನನ ಕಾಲದ ಲೇವಿಯ ಗೋತ್ರಪ್ರಧಾನರ ಪಟ್ಟಿಯು ಪೂರ್ವಕಾಲದ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.</verse>
				<verse number="24">ಈ ಲೇವಿ ಗೋತ್ರಪ್ರಧಾನರಲ್ಲಿ ಯೇಷೂವನ ಮಗನೂ ಯೋಚಾದಾಕನ ಮೊಮ್ಮಗನೂ ಆದ ಯೋಯಾಕೀಮ್, ರಾಜ್ಯಪಾಲನಾದ ನೆಹೆಮೀಯ, ಯಾಜಕನೂ ಧರ್ಮೋಪದೇಶಕನೂ ಆದ ಎಜ್ರ</verse>
				<verse number="25">ಇವರ ಕಾಲದಲ್ಲಿದ್ದವರು - ಹಷಬ್ಯ, ಶೇರೇಬ್ಯ, ಯೇಷೂವ, ಬಿನ್ನೂಯ್, ಕದ್ಮೀಯೇಲ್ ಇವರು.ದೈವಪುರುಷ ದಾವೀದನ ಅಪ್ಪಣೆಯ ಮೇರೆಗೆ ಇವರೂ ಇವರ ಸಹೋದರರೂ ಸರದಿಗೆ ಎರಡೆರಡು ವರ್ಗಗಳಾಗಿ ಪರಸ್ಪರ ಹಾಡುತ್ತಾ ಕೀರ್ತನೆಯನ್ನೂ ಕೃತಜ್ಞತಾಸ್ತುತಿಯನ್ನೂ ಮಾಡುತ್ತಿದ್ದರು.</verse>
				<verse number="26">ಇವರಲ್ಲದೆ ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣಗಳನ್ನು ಕಾಯತಕ್ಕ ದ್ವಾರಪಾಲಕರಾದ ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್, ಅಕ್ಕೂಬ್ ಎಂಬವರು.</verse>
				<verse number="27">ಜೆರುಸಲೇಮಿನ ಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ, ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು ಕೀರ್ತನಗಾಯನಗಳಿಂದಲೂ ತಾಳ, ಸ್ವರಮಂಡಲ, ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವುದಕ್ಕಾಗಿ ಜೆರುಸಲೇಮಿಗೆ ಕರೆಯಿಸಲಾಯಿತು.</verse>
				<verse number="28">ಆಗ ಜೆರುಸಲೇಮಿನ ಸುತ್ತಣ ಪ್ರಾಂತ್ಯಗಳಲ್ಲಿ ತಮಗಾಗಿ ಹಳ್ಳಿಗಳನ್ನು ಕಟ್ಟಿಕೊಂಡಿದ್ದ ಗಾಯಕಮಂಡಲಿಯವರು ಜೋರ್ಡನ್ ನದಿಯ ತಗ್ಗು, ಜೆರುಸಲೇಮಿನ ಸುತ್ತಣಪ್ರದೇಶ, ನೆಟೋಫಾತ್ಯರ ಗ್ರಾಮ</verse>
				<verse number="29">ಬೇತ್ಹಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್ ಊರುಗಳಿಗೆ ಸೇರಿರುವ ಹಳ್ಳಿಗಳು. ಇವುಗಳಿಂದ ಕೂಡಿಬಂದರು.</verse>
				<verse number="30">ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡ ಮೇಲೆ ಜನರನ್ನೂ ಊರುಬಾಗಿಲುಗಳನ್ನೂ ಗೋಡೆಯನ್ನೂ ಶುದ್ಧಪಡಿಸಿದರು.</verse>
				<verse number="31">ಆಮೇಲೆ ನಾನು ಯೆಹೂದ ಪ್ರಮುಖರನ್ನು ಗೋಡೆಯ ಮೇಲೆ ಕರೆದುಕೊಂಡು ಬಂದೆ; ಭಜನೆ ಮಂಡಲಿಯವರಿಗೆ, “ಎರಡು ದೊಡ್ಡ ಗುಂಪುಗಳಾಗಿ ಇಲ್ಲಿ ನಿಲ್ಲಿ,” ಎಂದು ಅಪ್ಪಣೆಮಾಡಿದೆ. ಒಂದು ಗುಂಪಿನವರು ಮೆರವಣಿಗೆಯಿಂದ ಗೋಡೆಯ ಮೇಲೆ ತಿಪ್ಪೆಬಾಗಿಲಿನಿಂದ ಬಲಗಡೆಗೆ ಹೋದರು.</verse>
				<verse number="32">ಅವರ ಹಿಂದೆ ಯೆಹೂದ ಪ್ರಮುಖರು ಅರ್ಧಜನರೊಡನೆ ಹೋದರು; ಹೋಷಾಯನು</verse>
				<verse number="33">ತುತೂರಿ ಹಿಡಿದಿರುವ ಯಾಜಕರೊಡನೆ</verse>
				<verse number="34">ಅಜರ್ಯ, ಎಜ್ರ, ಮೆಷುಲ್ಲಾಮ್, ಯೆಹೂದ್ಯ, ಬೆನ್ಯಾಮೀನ್, ಶೆಮಾಯ, ಯೆರೆಮೀಯ ಎಂಬವರು ಹೋದರು.</verse>
				<verse number="35">ಅವರೊಂದಿಗೆ ಆಸಾಫ್ ಸಂತಾನದ ಜಕ್ಕೂರನಿಗೆ ಹುಟ್ಟಿದ ಮೀಕಾಯನ ವಂಶದವನೂ ಮತ್ತನ್ಯನ ಮರಿಮಗನೂ ಶೆಮಾಯನ ಮೊಮ್ಮಗನೂ ಯೋನಾತಾನನ ಮಗನೂ ಆದ</verse>
				<verse number="36">ಜೆಕರ್ಯನೂ ದೈವಪುರುಷ ದಾವೀದನ ವಾದ್ಯಗಳನ್ನು ಹಿಡಿದಿದ್ದ. ಇವನ ಬಂಧುಗಳಾದ ಶೆಮಾಯ, ಅಜರೇಲ್, ಮಿಲಲೈ, ಗಿಲಾಲೈ, ಮಾಯೈ, ನೆತನೇಲ್, ಯೆಹೂದ, ಹನಾನೀ ಎಂಬವರೂ ಹೋದರು. ಧರ್ಮೋಪದೇಶಕನಾದ ಎಜ್ರನು ಇವರ ಮುಂದಾಳಾಗಿ ಇದ್ದನು.</verse>
				<verse number="37">ಇವರು ಬುಗ್ಗೆಬಾಗಿಲನ್ನು ಹಾದು ನೆಟ್ಟಗೆ ದಾವೀದನಗರದ ಸೋಪಾನಗಳ ಮಾರ್ಗವಾಗಿ ಗೋಡೆಯನ್ನನುಸರಿಸಿ, ಅರಮನೆಯ ಮೇಲಣ ದಿನ್ನೆಯನ್ನು ಹತ್ತಿ, ಪೂರ್ವದಿಕ್ಕಿನಲ್ಲಿರುವ ನೀರು ಬಾಗಿಲಿನವರೆಗೆ ಹೋದರು.</verse>
				<verse number="38">ಅವರನ್ನು ಎದುರುಗೊಳ್ಳುವ ಹಾಗೆ ಭಜನೆಮಂಡಲಿಯ ಎರಡನೆಯ ಗುಂಪಿನವರೂ ನಾನೂ ಉಳಿದ ಅರ್ಧಜನರೂ ಗೋಡೆಯ ಮೇಲೆ ಒಲೆಬುರುಜಿನಿಂದ ಅಗಲ ಗೋಡೆಯವರೆಗೂ</verse>
				<verse number="39">ಅಲ್ಲಿಂದ ಎಫ್ರಯಿಮ್ ಬಾಗಿಲು, ಯೆಷಾನಾ ಬಾಗಿಲು, ಮೀನು ಬಾಗಿಲು, ಹನನೇಲ್ ಬುರುಜು, ಹಮ್ಮೇಯಾ ಬುರುಜು ಇವುಗಳ ಮಾರ್ಗವಾಗಿ ಕುರಿಬಾಗಿಲಿನವರೆಗೂ ಹೋಗಿ ಸೆರೆಮನೆಯ ಬಾಗಿಲಿನ ಬಳಿಯಲ್ಲಿ ನಿಂತೆವು.</verse>
				<verse number="40">ಎರಡು ಭಜನೆಮಂಡಲಿಯ ಗುಂಪಿನವರೂ ನಾನು ನನ್ನ ಜೊತೆಯಲ್ಲಿದ್ದ ಅರ್ಧಮಂದಿ ಅಧಿಕಾರಿಗಳೂ</verse>
				<verse number="41">ತುತೂರಿ ಹಿಡಿದಿರುವ ಯಾಜಕರಾದ ಎಲ್ಯಾಕೀಮ್, ಮಾಸೇಯ, ಮಿನ್ಯಾಮೀನ್, ಮೀಕಾಯ, ಎಲ್ಯೋವೇನೈ,</verse>
				<verse number="42">ಜೆಕರ್ಯ, ಹನನ್ಯ ಇವರೂ, ಮಾಸೇಯ, ಶೆಮಾಯ, ಎಲ್ಲಾಜಾರ್, ಉಜ್ಜೀ, ಯೆಹೋ ಹಾನಾನ್, ಮಲ್ಕೀಯ, ಏಲಾಮ್, ಎಜೆರ್ ಎಂಬವರೂ ದೇವಾಲಯದ ಬಳಿಯಲ್ಲಿ ನಿಂತರು. ಗಾಯಕರು ಹಾಡತೊಡಗಿದರು. ಇಜ್ರಹ್ಯನು ಇವರ ನಾಯಕನಾಗಿದ್ದನು.</verse>
				<verse number="43">ದೇವರು ತಮಗೆ ವಿಶೇಷಾನಂದವನ್ನುಂಟು ಮಾಡಿದ್ದರಿಂದ ಜನರು ಆ ದಿನ ಅನೇಕ ಬಲಿದಾನಗಳನ್ನು ಸಮರ್ಪಿಸಿ ತಮ್ಮ ಮಡದಿಮಕ್ಕಳೊಡನೆ ಮಹೋತ್ಸವ ಮಾಡಿದರು. ಜೆರುಸಲೇಮಿನ ಉತ್ಸವದ ಹರ್ಷಧ್ವನಿ ಬಹುದೂರದವರೆಗೂ ಕೇಳಿಸಿತು.</verse>
				<verse number="44">ಸೇವೆಮಾಡುತ್ತಿದ್ದ ಯಾಜಕರ ಮತ್ತು ಲೇವಿಯರ ವಿಷಯದಲ್ಲಿ ಯೆಹೂದ್ಯರಿಗೆ ಬಹು ಸಂತೋಷವುಂಟಾಯಿತು. ಆ ದಿನದಲ್ಲಿ ಅವರು ಧರ್ಮವಿಧಿಯ ಪ್ರಕಾರ ಆಯಾ ಊರುಗಳ ಭೂಮಿಯಿಂದ ಯಾಜಕರಿಗೂ ಲೇವಿಯರಿಗೂ ಸಿಕ್ಕತಕ್ಕ ಭಾಗಗಳನ್ನು ಅಂದರೆ, ದೇವರಿಗಾಗಿ ಪ್ರತ್ಯೇಕಿಸತಕ್ಕ ವಸ್ತು, ಪ್ರಥಮಫಲ, ದಶಮಾಂಶ ಇವುಗಳನ್ನು ಸಂಗ್ರಹಮಾಡತಕ್ಕ ಕೊಠಡಿಗಳ ಮೇಲೆ ಪಾರುಪತ್ಯಗಾರರನ್ನು ನೇಮಿಸಿದರು.</verse>
				<verse number="45">ಆ ಯಾಜಕರೂ ಲೇವಿಯರೂ ತಮ್ಮ ದೇವರ ಸೇವಾಸಂಬಂಧದಲ್ಲಿ ಹಾಗು ಶುದ್ಧೀಕರಣ ಸಂಬಂಧದಲ್ಲಿ ತಮ್ಮ ಕರ್ತವ್ಯವನ್ನು ಜಾಗರೂಕತೆಯಿಂದ ನೆರವೇರಿಸುತ್ತಿದ್ದರು. ಅವರಂತೆ ಗಾಯಕರೂ ದ್ವಾರಪಾಲಕರೂ ಸಹ ದಾವೀದನಿಂದಲೂ ಅವನ ಮಗ ಸೊಲೊಮೋನನಿಂದಲೂ ಸ್ಥಾಪಿತವಾದ ಕ್ರಮಾನುಸಾರ ನಡೆಯುತ್ತಿದ್ದರು.</verse>
				<verse number="46">ಗಾಯನಮಂಡಲಿಗಳು ಕೃತಜ್ಞತಾ ಸ್ತುತಿಕೀರ್ತನೆಗಳ ದೇವಸೇವೆಯೂ ಪೂರ್ವಕಾಲದಲ್ಲಿ ಅಂದರೆ, ದಾವೀದನ ಮತ್ತು ಆಸಾಫನ ಕಾಲದಲ್ಲೇ ಇದ್ದವು.</verse>
				<verse number="47">ಜೆರುಬ್ಬಾಬೆಲ್, ನೆಹೆಮೀಯ ಇವರ ಕಾಲಗಳಲ್ಲಿ ಎಲ್ಲಾ ಇಸ್ರಯೇಲರು ಗಾಯಕರಿಗೂ ದ್ವಾರಪಾಲಕರಿಗೂ ದಿನದಿನಕ್ಕೆ ಸಿಕ್ಕತಕ್ಕ ಪಾಲುಗಳನ್ನು ಕೊಡುತ್ತ ಇದ್ದರು. ಇವರು ಅವುಗಳಲ್ಲಿ ದಶಮಾಂಶವನ್ನು ಲೇವಿಯರಿಗೂ ಲೇವಿಯರು ತಮ್ಮದರಲ್ಲಿ ದಶಮಾಂಶವನ್ನು ಆರೋನನ ಮಕ್ಕಳಿಗೂ ಕೊಡುತ್ತಿದ್ದರು.</verse>
			</chapter>
			<chapter number="13">
				<verse number="1">ಆ ಕಾಲದಲ್ಲಿ ಜನರ ಮುಂದೆ ಮೋಶೆಯ ಧರ್ಮಶಾಸ್ತ್ರ ಪಾರಾಯಣವು ನಡೆಯುತ್ತಿತ್ತು. ಅದರಲ್ಲಿ - ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಸೇರಬಾರದಿತ್ತು.</verse>
				<verse number="2">ಏಕೆಂದರೆ ಅವರು ಇಸ್ರಯೇಲರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ; ಅವರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣಕೊಟ್ಟು ಅವನನ್ನು ಕರೆಸಿದ್ದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಆಶೀರ್ವಾದವನ್ನೇ ಹೇಳಿಸಿದರು ಎಂಬ ಮಾತು ಬರೆದಿರುವುದಾಗಿ ಗೊತ್ತಾಯಿತು.</verse>
				<verse number="3">ಇಸ್ರಯೇಲರು ಈ ಧರ್ಮವಿಧಿಯನ್ನು ಕೇಳಿದೊಡನೆ ಎಲ್ಲ ಮಿಶ್ರಜಾತಿ ಅವರನ್ನು ತಮ್ಮ ಮಧ್ಯೆಯಿಂದ ಬೇರ್ಪಡಿಸಿದರು.</verse>
				<verse number="4">ಇದಕ್ಕಿಂತ ಮೊದಲು ಯಾಜಕ ಎಲ್ಯಾಷೀಬನು ನಮ್ಮ ದೇವಾಲಯದ ಕೊಠಡಿಗಳ ಮೇಲ್ವಿಚಾರಕನಾಗಿ ನೇಮಕಗೊಂಡಿದ್ದನು. ಇವನು ಟೋಬೀಯನ ಬೀಗನಾಗಿದ್ದುದರಿಂದ</verse>
				<verse number="5">ನೈವೇದ್ಯದ್ರವ್ಯ, ಧೂಪಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳ ದಶಮಾಂಶವನ್ನೂ ಲೇವಿಯರಿಗೆ, ಗಾಯಕರಿಗೆ ಹಾಗು ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ ಯಾಜಕರಿಗಾಗಿ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಅವನಿಗಾಗಿ ಸಿದ್ಧಮಾಡಿಸಿಕೊಟ್ಟಿದ್ದನು.</verse>
				<verse number="6">ನಾನು ಬಾಬಿಲೋನಿನ ಅರಸ ಅರ್ತಷಸ್ತನ ಮೂವತ್ತೆರಡನೆಯ ವರ್ಷದಲ್ಲಿ ಅರಸನ ಬಳಿಗೆ ಹೋಗಿದ್ದೆ. ಆದುದರಿಂದ ಇದೆಲ್ಲಾ ನಡೆಯುವಾಗ ನಾನು ಜೆರುಸಲೇಮಿನಲ್ಲಿರಲಿಲ್ಲ. ಕ್ರಮೇಣ ನಾನು ಅರಸನಿಂದ ಅಪ್ಪಣೆ ಪಡೆದುಕೊಂಡು</verse>
				<verse number="7">ಮತ್ತೆ ಜೆರುಸಲೇಮಿಗೆ ಬಂದೆ. ಆಗ ಎಲ್ಯಾಷೀಬನು ಟೋಬೀಯನಿಗಾಗಿ ದೇವಾಲಯ ಪ್ರಾಕಾರದೊಳಗೆ ಕೊಠಡಿಯನ್ನು ಸಿದ್ಧಮಾಡಿಕೊಟ್ಟಿದ್ದನ್ನು ನೋಡಿದೆ.</verse>
				<verse number="8">ಈ ದುಷ್ಕೃತ್ಯದ ನಿಮಿತ್ತ ಬಹಳವಾಗಿ ವ್ಯಸನಗೊಂಡು ಟೋಬೀಯನ ಮನೆಯ ಸಾಮಾನುಗಳನ್ನು</verse>
				<verse number="9">ಆ ಕೊಠಡಿಯಿಂದ ಹೊರಗೆ ಹಾಕಿಸಿ ಕೊಠಡಿಯನ್ನು ಶುದ್ಧಮಾಡುವುದಕ್ಕೆ ಅಪ್ಪಣೆಕೊಟ್ಟೆ. ಅದು ಶುದ್ಧಮಾಡುವುದಕ್ಕೆ ಅಪ್ಪಣೆಕೊಟ್ಟೆ. ಅದು ಶುದ್ಧವಾದ ಮೇಲೆ ದೇವಾಲಯದ ಪಾತ್ರೆ, ನೈವೇದ್ಯದ್ರವ್ಯ, ಧೂಪ ಇವುಗಳನ್ನು ಪುನಃ ಅಲ್ಲಿಡಿಸಿದೆ.</verse>
				<verse number="10">ಇದಲ್ಲದೆ, ಲೇವಿಯರಿಗೆ ಸಲ್ಲತಕ್ಕ ಪಾಲುಗಳು ಅವರಿಗೆ ಸಿಕ್ಕಲಿಲ್ಲವೆಂದೂ ಆರಾಧನೆ ನಡೆಸತಕ್ಕ ಲೇವಿಯರೂ ಗಾಯಕರೂ ತಮ್ಮ ತಮ್ಮ ಆಸ್ತಿಯಿದ್ದಲ್ಲಿಗೆ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು.</verse>
				<verse number="11">ಈ ಕಾರಣ ನಾನು ಅಧಿಕಾರಿಗಳನ್ನು, “ದೇವಾಲಯವನ್ನು ಅಲಕ್ಷ್ಯಮಾಡಿದ್ದೇಕೆ?\, ಎಂಬುದಾಗಿ ಪ್ರಶ್ನಿಸಿದೆ; ಬಿಟ್ಟುಹೋದವರನ್ನು ತಿರುಗಿ ಕರೆಸಿ, ಅವರನ್ನು ಅವರವರ ಉದ್ಯೋಗಗಳಲ್ಲಿರಿಸಿದೆ.</verse>
				<verse number="12">ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.</verse>
				<verse number="13">ಆಮೇಲೆ ಉಗ್ರಾಣಗಳನ್ನು ನೋಡಿಕೊಳ್ಳುವುದಕ್ಕೆ ಯಾಜಕನಾದ ಶೆಲೆಮ್ಯ, ಲೇಖಕನಾದ ಚಾದೋಕ್, ಲೇವಿಕುಲದವನಾದ ಪೆದಾಯ ಇವರನ್ನೂ ಇವರ ಸಹಾಯಕ್ಕಾಗಿ ಜಕ್ಕೂರನ ಮಗನೂ ಮತ್ತನ್ಯನ ಮೊಮ್ಮಗನೂ ಆದ ಹಾನಾನನನ್ನೂ ನೇಮಿಸಿದೆ. ಇವರೆಲ್ಲರೂ ನಂಬಿಕಸ್ತರೆಂದು ಹೆಸರುಗೊಂಡವರು. ತಮ್ಮ ಸಹೋದರರಿಗೆ ತಕ್ಕದ್ದನ್ನು ಹಂಚಿಕೊಡುವುದು ಇವರ ಕರ್ತವ್ಯವಾಗಿತ್ತು.</verse>
				<verse number="14">ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ಸ್ಮರಿಸಿಕೊಳ್ಳಿ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು ನಿಮ್ಮ ನೆನಪಿನಿಂದ ಅಳಿಸಿಬಿಡಬೇಡಿ.</verse>
				<verse number="15">ಆ ಕಾಲದಲ್ಲಿ, ಜನರು ಸಬ್ಬತ್‍ದಿನ ಜುದೇಯನಾಡಿನಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನು ಕಂಡೆ; ಅಂತೆಯೇ ಕಣದ ಕಾಳನ್ನು ಕೂಡಿಸಿ ಆ ಕಾಳು, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು, ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಜೆರುಸಲೇಮಿಗೆ ತರುವುದನ್ನು ಗಮನಿಸಿದೆ. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ಅವರನ್ನು ಗದರಿಸಿದೆ.</verse>
				<verse number="16">ಇದಲ್ಲದೆ, ಈ ನಾಡಿನಲ್ಲಿ ವಾಸಿಸುತ್ತಿದ್ದ ಟೈರಿನವರು ಮೀನು ಮುಂತಾದ ಸರಕುಗಳನ್ನು ತಂದು ಯೆಹೂದ್ಯರಿಗೆ ಸಬ್ಬತ್‍ದಿನದಲ್ಲಿ ಜೆರುಸಲೇಮಿನಲ್ಲೇ ಮಾರುತ್ತಿದ್ದರು.</verse>
				<verse number="17">ಆಗ ನಾನು ಯೆಹೂದ ಶ್ರೀಮಂತರಿಗೆ, “ನೀವು ಮಾಡುವುದು ಎಂಥ ದುಷ್ಕೃತ್ಯ! ನೀವು ಸಬ್ಬತ್‍ದಿನವನ್ನು ಅಶುದ್ಧಮಾಡುತ್ತಿದ್ದೀರಿ.</verse>
				<verse number="18">ನಿಮ್ಮ ಪೂರ್ವಿಕರು ಹೀಗೆ ಮಾಡಿದ್ದರಿಂದಲೆ ನಮ್ಮ ದೇವರು ಎಲ್ಲಾ ಕೇಡನ್ನು ನಮ್ಮ ಮೇಲೂ ನಮ್ಮ ಪಟ್ಟಣದ ಮೇಲೂ ಬರಮಾಡಿದ್ದಾರೆ. ಹೀಗಿರಲಾಗಿ, ನೀವೂ ಸಬ್ಬತ್‍ದಿನವನ್ನು ಅಶುದ್ಧಮಾಡಿ ಇಸ್ರಯೇಲರ ಮೇಲಿದ್ದ ದೇವಕೋಪವನ್ನು ಹೆಚ್ಚಿಸಬೇಡಿ,” ಎಂದು ಹೇಳಿ ಅವರನ್ನು ಗದರಿಸಿದೆ.</verse>
				<verse number="19">ಇದಲ್ಲದೆ, “ಸಬ್ಬತ್‍ದಿನ ಪ್ರಾರಂಭವಾಗುವುದಕ್ಕಿಂತ ಮೊದಲು ಜೆರುಸಲೇಮಿನ ಬಾಗಿಲುಗಳಲ್ಲಿ ಕತ್ತಲಾಗುವಾಗಲೇ ಕದಗಳನ್ನು ಮುಚ್ಚಿಸಬೇಕು; ಸಬ್ಬತ್‍ದಿನ ಗತಿಸುವುದಕ್ಕಿಂತ ಮುಂಚೆ ಅವುಗಳನ್ನು ತೆರೆಯಬಾರದು,” ಎಂದು ಆಜ್ಞಾಪಿಸಿದೆ. ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಕಾವಲಿರಿಸಿದೆ.</verse>
				<verse number="20">ಆದುದರಿಂದ ವರ್ತಕರು ಹಾಗು ಎಲ್ಲ ತರದ ದಿನಸುಗಳನ್ನು ಮಾರುವುದಕ್ಕೆ ಬಂದವರು ಒಂದೆರಡು ಸಾರಿ ಜೆರುಸಲೇಮಿನ ಹೊರಗಡೆಯೇ ಇಳಿದುಕೊಂಡರು.</verse>
				<verse number="21">ಕಡೆಗೆ ನಾನು ಅವರನ್ನು, “ನೀವು ಗೋಡೆಯ ಹೊರಗೇಕೆ ಇಳಿದುಕೊಂಡಿದ್ದೀರಿ? ನೀವು ಮತ್ತೆ ಹೀಗೆ ಮಾಡಿದರೆ ನಿಮ್ಮನ್ನು ಸೆರೆಹಿಡಿಸುವೆನು,” ಎಂದು ಗದರಿಸಿದೆ.</verse>
				<verse number="22">ಅವರು ಅಂದಿನಿಂದ ಸಬ್ಬತ್‍ದಿನದಂದು ಪುನಃ ಬರಲಿಲ್ಲ. ಆಮೇಲೆ ನಾನು ಲೇವಿಯರಿಗೆ, “ಸಬ್ಬತ್‍ದಿನವನ್ನು ಪರಿಶುದ್ಧದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು,” ಎಂದು ಆಜ್ಞಾಪಿಸಿದೆ. “ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು ನಿಮ್ಮ ಮಹಾಕೃಪೆಗನುಸಾರ ನನ್ನನ್ನು ಕನಿಕರಿಸಿರಿ.”</verse>
				<verse number="23">ಅದೇ ಕಾಲದಲ್ಲಿ ಅಷ್ಡೋದ್, ಅಮ್ಮೋನಿಯ ಹಾಗು ಮೋವಾಬ್ ಮಹಿಳೆಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ನಾನು ವಿಚಾರಮಾಡಿದೆ.</verse>
				<verse number="24">ಅವರ ಮಕ್ಕಳಲ್ಲಿ ಅರ್ಧಮಂದಿ ಜುದೇಯದ ಭಾಷೆಯಲ್ಲಿ ಮಾತಾಡಲರಿಯದೆ ಅಷ್ಡೋದ್ಯ ಮುಂತಾದ ಜನರ ಭಾಷೆಯನ್ನಾಡುತ್ತಾರೆ ಎಂದು ತಿಳಿಯಿತು.</verse>
				<verse number="25">ಕೋಪಗೊಂಡು ಅವರನ್ನು ಶಪಿಸಿದೆ; ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕೀಳಿಸಿದೆ.</verse>
				<verse number="26">“ಅಂಥ ಮಹಿಳೆಯರ ದೆಸೆ ಇಂದಲೇ ಇಸ್ರಯೇಲ್ ಅರಸ ಸೊಲೊಮೋನನು ದೋಷಿಯಾದ; ಅನೇಕಾನೇಕ ಜನಾಂಗಗಳಲ್ಲಿ ಅವನಿಗೆ ಸಮಾನನಾದ ಅರಸನಿರಲಿಲ್ಲ; ಅವನು ತನ್ನ ದೇವರಿಗೆ ವಿಶೇಷಪ್ರಿಯನು; ಆದುದರಿಂದಲೇ ದೇವರು ಅವನನ್ನು ಎಲ್ಲ ಇಸ್ರಯೇಲರ ಮೇಲೆ ಅರಸನನ್ನಾಗಿ ನೇಮಿಸಿದರು. ಆದರೂ ಅನ್ಯದೇಶದ ಮಹಿಳೆಯರು ಅವನನ್ನು ಪಾಪದಲ್ಲಿ ಬೀಳಿಸಿದರು.</verse>
				<verse number="27">ಹೀಗಿರಲಾಗಿ, ನೀವೂ ಅನ್ಯಮಹಿಳೆಯರನ್ನು ಮದುವೆಮಾಡಿಕೊಂಡು, ಅದೇ ಘೋರವಾದ ದುಷ್ಕೃತ್ಯವನ್ನು ನಡೆಸಿ, ದೇವರಿಗೆ ದ್ರೋಹಿಗಳಾಗುವುದನ್ನು ನಾವು ಒಪ್ಪಿಕೊಳ್ಳುವುದಿಲ್ಲ,” ಎಂದು ಅವರನ್ನು ಗದರಿಸಿದೆ.”ಅನ್ಯರ ಮಕ್ಕಳಿಗೆ ಹೆಣ್ಣು ಕೊಡಬಾರದು; ನಮಗಾಗಲಿ ನಮ್ಮ ಮಕ್ಕಳಿಗಾಗಲಿ ಅವರಿಂದ ಹೆಣ್ಣು ತರಲೂಬಾರದು” ಎಂಬ ಧರ್ಮವಿಧಿಯನ್ನು ಕೈಗೊಳ್ಳುವುದಾಗಿ ದೇವರ ಹೆಸರಿನಲ್ಲಿ ಅವರಿಂದ ಪ್ರಮಾಣ ಮಾಡಿಸಿದೆ.</verse>
				<verse number="28">ಮಹಾಯಾಜಕ ಎಲ್ಯಾಷೀಬನ ಮಗ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದುದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆ.</verse>
				<verse number="29">“ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರೆ; ಇದನ್ನು ನೆನಪುಮಾಡಿಕೊಳ್ಳಿ.”</verse>
				<verse number="30">ನಾನು ಈ ಪ್ರಕಾರ ಅನ್ಯವಾದ್ದನ್ನೆಲ್ಲಾ ತೆಗೆಸಿ, ಅವರನ್ನು ಶುದ್ದಪಡಿಸಿದೆ; ಯಾಜಕರಲ್ಲೂ ಪ್ರತಿಯೊಬ್ಬನಿಗಿದ್ದ ಕೆಲಸದ ವಿಷಯವಾಗಿ ಹಾಗು</verse>
				<verse number="31">ನೇಮಿತಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿ ಕ್ರಮಗಳನ್ನು ಏರ್ಪಡಿಸಿದೆ; ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪುಮಾಡಿಕೊಳ್ಳಿ.</verse>
			</chapter>
		</book>
		<book number="17">
			<chapter number="1">
				<verse number="1">ಭಾರತ (ಇಂಡಿಯಾ) ದೇಶ ಮೊದಲುಗೊಂಡು ಇಥಿಯೋಪಿಯ ದೇಶದವರೆಗೂ ಇದ್ದ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಅರಸ ಅಹಷ್ವೇರೋಷನು ಆಳುತ್ತಿದ್ದನು.</verse>
				<verse number="2">ಅರಸನು ತನ್ನ ರಾಜಧಾನಿಯಾಗಿದ್ದ ಶೂಷನ್ ನಗರದಲ್ಲಿ ರಾಜಸಿಂಹಾಸನವನ್ನೇರಿ ಆಡಳಿತ ನಡೆಸುತ್ತಿದ್ದ ಮೂರನೆಯ ವರ್ಷದಲ್ಲಿ ತನ್ನ ಎಲ್ಲಾ ಉನ್ನತ ಅಧಿಕಾರಿಗಳಿಗೂ ಪರಿವಾರದವರಿಗೂ ಒಂದು ಔತಣವನ್ನೇರ್ಪಡಿಸಿದನು.</verse>
				<verse number="3">ಪರ್ಷಿಯ ಮತ್ತು ಮೇದ್ಯ ದೇಶಗಳ ದಂಡನಾಯಕರೂ ಪದಾಧಿಕಾರಿಗಳೂ ಸಂಸ್ಥಾನದ ಅಧಿಕಾರಿಗಳೂ ಅರಸನ ಮುಂದೆ ಉಪಸ್ಥಿತರಿದ್ದರು.</verse>
				<verse number="4">ಅರಸನು ತನ್ನ ಘನರಾಜ್ಯದ ಸಿರಿಸಂಪತ್ತನ್ನು, ವೈಭವವನ್ನು ಹಾಗು ರಾಜ್ಯದ ಆಡಂಬರವನ್ನು ಅವರೆಲ್ಲರ ಮುಂದೆ ಬಹುದಿನಗಳವರೆಗೆ ಅಂದರೆ, ನೂರೆಂಬತ್ತು ದಿನಗಳವರೆಗೆ ಪ್ರದರ್ಶಿಸಿದನು.</verse>
				<verse number="5">ಆ ದಿನಗಳು ಕಳೆದ ನಂತರ ಅರಸನು ಶೂಷನ್ ನಗರದ ನಿವಾಸಿಗಳಿಗೆ ಶ್ರೀಮಂತ-ಬಡವ ಎಂಬ ಯಾವ ಭೇದಭಾವ ಮಾಡದೆ ಎಲ್ಲರಿಗೂ ಅರಮನೆಯ ತೋಟದ ಅಂಗಳದಲ್ಲಿ ಏಳು ದಿನಗಳ ಪರಿಯಂತರ ದೊಡ್ಡ ಔತಣವನ್ನೇರ್ಪಡಿಸಿದನು.</verse>
				<verse number="6">ಅಂಗಳದಲ್ಲಿ ಬಿಳಿ, ಹಸಿರು, ನೀಲಿವರ್ಣದ ಪರದೆಗಳು ರಕ್ತವರ್ಣದ ನಾರಿನ ಹಗ್ಗಗಳಿಂದ ಅಮೃತಶಿಲೆಯ ಬೆಳ್ಳಿಯ ಉಂಗುರಗಳಿಗೆ ತೂಗುಹಾಕಲಾಗಿದ್ದವು. ಜರತಾರಿ ಎಳೆಗಳಿಂದ ಕಸೂತಿಮಾಡಿದ ಸುಖಾಸನ ಪೀಠಗಳು, ಕೆಂಪು, ಬಿಳಿ, ಹಳದಿ ಹಾಗೂ ಕಪ್ಪು ವರ್ಣದ ಅಮೃತಶಿಲೆಯ ಹಾಸುಗಲ್ಲುಗಳಿಂದ ರಚಿತವಾದ ನೆಲದ ಮೇಲೆ ಇಡಲಾಗಿದ್ದವು.</verse>
				<verse number="7">ನಾನಾ ಆಕಾರದ ಬಂಗಾರದ ಪಾತ್ರೆಗಳಲ್ಲಿ ಅರಸನ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿ ದ್ರಾಕ್ಷಾರಸವನ್ನು ಕುಡಿಯಲು ಕೊಡುವ ವ್ಯವಸ್ಥೆ ಮಾಡಲಾಗಿತ್ತು.</verse>
				<verse number="8">ಮಧುಪಾನ ಸೇವನೆಯಲ್ಲಿ ಪ್ರತಿಯೊಬ್ಬನಿಗೂ ತನ್ನ ಇಚ್ಛಾನುಸಾರ ಕೊಡಬೇಕೆಂತಲೂ ಯಾರಿಗೂ ಒತ್ತಾಯ ಮಾಡಬಾರದೆಂದೂ ಸೇವಕರಿಗೆ ಅರಸನು ಆದೇಶವಿತ್ತಿದ್ದನು.</verse>
				<verse number="9">ವಷ್ಟಿರಾಣಿಯು, ಮಹಿಳೆಯರಿಗೋಸ್ಕರ ಅರಮನೆಯಲ್ಲಿ ಪ್ರತ್ಯೇಕ ಏರ್ಪಾಡು ಮಾಡಿಸಿದ್ದಳು.</verse>
				<verse number="10">ಏಳನೆಯ ದಿನ ಅರಸ ಅಹಷ್ವೇರೋಷನು ಮಧುಪಾನ ಮಾಡಿ ಆನಂದ ಲಹರಿಯಲ್ಲಿದ್ದಾಗ ಬಹುಸುಂದರಿಯಾದ ತನ್ನ</verse>
				<verse number="11">ಪತ್ನಿಯ ರೂಪರಾಶಿಯನ್ನು ತನ್ನ ಪ್ರಜೆಗಳ ಹಾಗೂ ಪದಾಧಿಕಾರಿಗಳ ಮುಂದೆ ಪ್ರದರ್ಶಿಸುವ ಸಲುವಾಗಿ ರಾಜಮುಕುಟವನ್ನು ಧರಿಸಿದ ಆಕೆಯನ್ನು ರಾಜಸನ್ನಿಧಿಗೆ ಕರೆತರುವಂತೆ ಆಸ್ಥಾನ ಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳುಮಂದಿ ಕಂಚುಕಿಯರಿಗೆ ಅಪ್ಪಣೆಮಾಡಿದನು.</verse>
				<verse number="12">ಆದರೆ, ಕಂಚುಕಿಗಳು ರಾಜಾಜ್ಞೆಯನ್ನು ವಷ್ಟಿರಾಣಿಗೆ ತಿಳಿಸಿದಾಗ, ಆಕೆ ಬರಲು ನಿರಾಕರಿಸಿದಳು. ಇದನ್ನು ಕೇಳಿದಾಗ ಅರಸನು ಕುಪಿತಗೊಂಡು, ರೌದ್ರಾವೇಶನಾದನು.</verse>
				<verse number="13">ವಿಧಿನಿಯಮಗಳನ್ನು ಬಲ್ಲ ಪಂಡಿತರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು.</verse>
				<verse number="14">ಅರಸ ಅಹಷ್ವೇರೋಷನ ಆಸ್ಥಾನದಲ್ಲಿ ರಾಜಸಾನ್ನಿಧ್ಯ ಸೇವಕರೂ ಪದಾಧಿಕಾರಿಗಳೂ ಆಗಿದ್ದ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಮಂದಿ ಪರ್ಷಿಯ ಮತ್ತು ಮೇದ್ಯ ದೇಶಗಳ ರಾಜಪ್ರಮುಖರು ಇದ್ದರು. ಸಮಯೋಚಿತ ವ್ಯವಹಾರ ಜ್ಞಾನಹೊಂದಿದವರಾದ ಇವರನ್ನು ಅರಸನು, ಈ ವಿಷಯವಾಗಿ ವಿಚಾರಿಸಿದನು.</verse>
				<verse number="15">“ಕಂಚುಕಿಗಳ ಮುಖಾಂತರ ತಿಳಿಯಪಡಿಸಿದ ರಾಜಾಜ್ಞೆಯನ್ನು ಉಲ್ಲಂಘಿಸಿದ ವಷ್ಟಿರಾಣಿಯ ವಿರುದ್ಧ ಯಾವ ನ್ಯಾಯಬದ್ಧವಾದ ಕ್ರಮ ತೆಗೆದುಕೊಳ್ಳಬೇಕು?” ಎಂದು ಕೇಳಿದನು.</verse>
				<verse number="16">ಅರಸನ ಮುಂದೆಯೂ ನೆರೆದಿದ್ದ ಪದಾಧಿಕಾರಿಗಳ ಮುಂದೆಯೂ ಇದಕ್ಕೆ ಉತ್ತರ ಈಯುತ್ತ ಮೆಮೂಕನು: “ವಷ್ಟಿರಾಣಿಯು ಬಗೆದಿರುವ ಅವಮಾನ ಅರಸನೊಬ್ಬನ ವಿರುದ್ಧ ಮಾತ್ರವಲ್ಲ, ಅರಸನ ರಾಜ್ಯದಲ್ಲಿರುವ ಎಲ್ಲಾ ಪದಾಧಿಕಾರಿಗಳ ಹಾಗೂ ಪ್ರಜೆಗಳ ವಿರುದ್ಧವೂ ಆಗಿದೆ.</verse>
				<verse number="17">ಹೇಗೆಂದರೆ, ವಷ್ಟಿರಾಣಿಯ ಈ ವರ್ತನೆ ಇತರ ಎಲ್ಲಾ ಸ್ತ್ರೀಯರಿಗೂ ತಿಳಿದುಬಂದು ಅವರೂ ತಮ್ಮ ಗಂಡಂದಿರನ್ನು ತಿರಸ್ಕಾರಭಾವದಿಂದ ಕಾಣತೊಡಗುವರು. ‘ಅಹಷ್ವೇರೋಷನು ರಾಣಿ ವಷ್ಟಿಗೆ ತನ್ನ ಮುಂದೆ ಬರಲು ಹೇಳಿಕಳುಹಿಸಿದನು; ಆದರೆ ಆಕೆ ಬರಲು ನಿರಾಕರಿಸಿದಳು,’ ಎಂದು ಹೇಳಿಕೊಂಡು ಹೀಯಾಳಿಸುವರು.</verse>
				<verse number="18">ಇದಲ್ಲದೆ, ರಾಣಿಯ ಈ ವರ್ತನೆಯ ಬಗ್ಗೆ ಕೇಳಿಸಿಕೊಂಡ ಪರ್ಷಿಯ, ಮೇದ್ಯ ದೇಶಗಳ ಕುಲೀನ ಸ್ತ್ರೀಯರೂ ಇದೇ ರೀತಿ ಅರಸರ ಪದಾಧಿಕಾರಿಗಳೊಂದಿಗೆ ವರ್ತಿಸುವರು. ಹೀಗೆ ತಿರಸ್ಕಾರವೂ ಕೋಪವೂ ಉಂಟಾಗುವುದು.</verse>
				<verse number="19">ಅರಸರು ಸಮ್ಮತಿಸುವುದಾದರೆ, ವಷ್ಟಿರಾಣಿಯು ಅರಸರ ಸನ್ನಿಧಿಗೆ ಇನ್ನೆಂದೂ ಬಾರದಂತೆ ನಿಷೇಧಾಜ್ಞೆಯಾಗಬೇಕು. ಪಟ್ಟದರಸಿ ಆದ ಆಕೆಯ ಸ್ಥಾನವನ್ನು ಅವಳಿಗಿಂತಲೂ ಉತ್ತಮಳಾದ ಮತ್ತೊಬ್ಬಳಿಗೆ ಕೊಡುವಂತಾಗಬೇಕು. ಈ ಬಗ್ಗೆ ರಾಜಾಜ್ಞೆಯೊಂದನ್ನು ಹೊರಡಿಸಿ ಅದು ರದ್ದಾಗದಂತೆ ಪರ್ಷಿಯರ, ಮೇದ್ಯರ ಶಾಸನಗಳಲ್ಲಿ ಲಿಖಿತವಾಗಬೇಕು.</verse>
				<verse number="20">ಅರಸರ ಈ ನಿರ್ಣಯವು ತಮ್ಮ ಹಿರಿಯರಿಂದ ಹಿಡಿದು ಕಿರಿಯರವರೆಗೂ ಎಲ್ಲಾ ಮಹಿಳೆಯರು ತಮ್ಮ ಗಂಡಂದಿರೊಂದಿಗೆ ಗೌರವದಿಂದ ವರ್ತಿಸುವರು,” ಎಂದು ಸಲಹೆ ನೀಡಿದನು.</verse>
				<verse number="21">ಮೆಮೂಕನು ನೀಡಿದ ಈ ಸಲಹೆ ಅರಸನಿಗೂ ಪದಾಧಿಕಾರಿಗಳಿಗೂ ಸರಿಕಂಡುಬಂತು. ಅರಸನು ಅದರಂತೆ ಮಾಡಿದನು.</verse>
				<verse number="22">ಪ್ರತಿಯೊಂದು ಕುಟುಂಬದಲ್ಲೂ ಪುರುಷನೇ ಅಧಿಕಾರ ವಹಿಸಬೇಕು, ಅವನು ಸ್ವಜನರ ಭಾಷೆಯಲ್ಲೇ ವ್ಯವಹಾರ ನಡೆಸಬೇಕು ಎಂದು ತನ್ನ ಎಲ್ಲಾ ರಾಜಸಂಸ್ಥಾನಗಳಲ್ಲಿ ಪತ್ರಗಳ ಮುಖೇನ ಪ್ರಕಟಿಸಿದನು. ಇವು ಆಯಾ ಪ್ರಾಂತ್ಯಗಳ ಹಾಗೂ ಜನಸಾಮಾನ್ಯರ ಭಾಷೆಗಳಲ್ಲೂ ಬರೆಯಲಾದವು.</verse>
			</chapter>
			<chapter number="2">
				<verse number="1">ಇದಾದ ಕೆಲವು ದಿನಗಳ ನಂತರ ಅರಸನ ಕೋಪವು ಶಾಂತವಾದಾಗ, ಅವನು ವಷ್ಟಿರಾಣಿಯನ್ನು, ಆಕೆಯ ವರ್ತನೆಯನ್ನು, ಆಕೆಯ ವಿರುದ್ಧ ತಾನು ನೀಡಿದ್ದ ತೀರ್ಪನ್ನು ಜ್ಞಾಪಿಸಿಕೊಂಡನು.</verse>
				<verse number="2">ಅವನ ಸೇವೆಮಾಡುತ್ತಿದ್ದ ರಾಜಪರಿವಾರದವರು ಅವನಿಗೆ, “ಅರಸರಿಗೋಸ್ಕರ ಸುಂದರ ಕನ್ಯೆಯರನ್ನು ಹುಡುಕುವುದಕ್ಕೆ ಅಪ್ಪಣೆ ಆಗಬೇಕು.</verse>
				<verse number="3">ಇದಕ್ಕಾಗಿ ರಾಜ್ಯದ ಎಲ್ಲಾ ಸಂಸ್ಥಾನಗಳಿಗೂ ಅಧಿಕಾರಿಗಳನ್ನೂ ಕಳುಹಿಸಬೇಕು. ಇವರು ಸುರಸುಂದರಿಯರಾದ ಕನ್ಯೆಯರನ್ನೆಲ್ಲಾ ಶೂಷನ್ ನಗರಕ್ಕೆ ಕರೆತಂದು ಅಂತಃಪುರದ ಪಾಲಕನೂ ರಾಜಕಂಚುಕಿಯೂ ಆದ ಹೇಗೈಯ ವಶಕ್ಕೆ ಒಪ್ಪಿಸಬೇಕು. ಇವನು ಅವರಿಗೆ ಸೌಂದರ್ಯವರ್ಧಕ ಸಾಧನಗಳನ್ನು, ಲೇಪನದ್ರವ್ಯಗಳನ್ನು ಕೊಡುವಂತೆ ವ್ಯವಸ್ಥೆ ಮಾಡಬೇಕು.</verse>
				<verse number="4">ಯಾವ ಕನ್ಯೆಯು ಅರಸನಿಗೆ ಸುಪ್ರೀತಳಾಗಿ ಕಾಣುವಳೋ ಅವಳು ವಷ್ಟಿರಾಣಿಯ ಬದಲಾಗಿ ಪಟ್ಟದರಸಿಯಾಗಬೇಕು,” ಎಂದು ಹೇಳಿದರು. ಅವರ ಈ ಸಲಹೆ ಅರಸನಿಗೆ ಸೂಕ್ತವೆಂದು ತೋರಿಬರಲು ಅವನು ಅದೇ ಪ್ರಕಾರ ಮಾಡಿದನು.</verse>
				<verse number="5">ಶೂಷನ್ ನಗರದಲ್ಲಿ ಮೊರ್ದೆಕೈ ಎಂಬ ಯೆಹೂದ್ಯನೊಬ್ಬನು ವಾಸಿಸುತ್ತಿದ್ದನು. ಇವನು ಬೆನ್ಯಾಮೀನ್ ಕುಲದ ಕೀಷನ ಮರಿಮಗನೂ, ಶಿಮ್ಗಿಯ ಮೊಮ್ಮಗನೂ ಯಾಯೀರನ ಮಗನೂ ಆಗಿದ್ದನು.</verse>
				<verse number="6">ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನಿಂದ ಸೆರೆಹಿಡಿಯಲಾದ ಯೆಹೂದ ಅರಸನಾದ ಯೆಕೋನ್ಯನ ಸಂಗಡ ಜೆರುಸಲೇಮಿನಿಂದ ಸೆರೆಹಿಡಿಯಲಾದವರಲ್ಲಿ ಇವನೂ ಒಬ್ಬನಾಗಿದ್ದನು.</verse>
				<verse number="7">ತಂದೆತಾಯಿಗಳನ್ನು ಕಳೆದುಕೊಂಡು ಅನಾಥಳಾಗಿದ್ದ ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರಳನ್ನು (ಹದೆಸ್ಸಾ ಆಕೆಯ ಇನ್ನೊಂದು ಹೆಸರು) ತನ್ನ ಸ್ವಂತ ಮಗಳಂತೆ ಸ್ವೀಕರಿಸಿ ಸಾಕುತ್ತಿದ್ದನು. ಈಕೆ ಬಲು ರೂಪಸಿ ಹಾಗು ಲಾವಣ್ಯವತಿಯಾಗಿದ್ದಳು.</verse>
				<verse number="8">ಅರಸನ ನಿರ್ಣಯದ ಪ್ರಕಾರ ರಾಜಾಜ್ಞೆಯು ಎಲ್ಲೆಡೆ ಪ್ರಕಟವಾಯಿತು. ಅನೇಕ ಮಂದಿ ಕನ್ಯೆಯರನ್ನು ಶೂಷನ್ ನಗರಕ್ಕೆ ಕರೆತಂದು ಅಂತಃಪುರಪಾಲಕನಾದ ಹೇಗೈಯನ ವಶಕ್ಕೆ ಒಪ್ಪಿಸಲಾಯಿತು. ಇಂಥವರಲ್ಲಿ ಎಸ್ತೇರಳೂ ಒಬ್ಬಳು.</verse>
				<verse number="9">ಎಸ್ತೇರಳು ಹೇಗೈಯನ ಮೆಚ್ಚುಗೆಯನ್ನು ಗಳಿಸಿ ಅವನ ದಯೆಗೆ ಪಾತ್ರಳಾದಳು. ಈ ಕಾರಣದಿಂದ ಅವನು ಆಕೆಗೆ ತಕ್ಕ ಸೌಂದರ್ಯವರ್ಧಕ ಲೇಪನದ್ರವ್ಯಗಳನ್ನು ಹಾಗು ಉತ್ತಮ ಭೋಜನಾಂಶವನ್ನು ಕೊಟ್ಟು, ಆಕೆಯನ್ನೂ ಆಕೆಯ ಸೇವೆಗೆ ಆರಿಸಿದ ಏಳುಮಂದಿ ದಾಸಿಯರನ್ನೂ ಅಂತಃಪುರದ ಉತ್ತಮ ಭಾಗದಲ್ಲಿರಿಸಿದನು.</verse>
				<verse number="10">ತನ್ನ ಸ್ವಜನರ ಹಾಗು ಬಂಧುಬಳಗದವರ ಬಗ್ಗೆ ಎಸ್ತೇರಳು ಯಾರಿಗೂ ತಿಳಿಸಿರಲಿಲ್ಲ. ತಿಳಿಸಬಾರದೆಂದು ಮೊರ್ದೆಕೈ ವಿಧಿಸಿದ್ದನು.</verse>
				<verse number="11">ಎಸ್ತೇರಳ ಯೋಗಕ್ಷೇಮವನ್ನು ವಿಚಾರಿಸಿಕೊಳ್ಳಲು ಮೊರ್ದೆಕೈ ಪ್ರತಿದಿನ ಅಂತಃಪುರದ ಅಂಗಳದ ಬಳಿ ಬಂದು ಹೋಗುತ್ತಿದ್ದನು.</verse>
				<verse number="12">ಕನ್ಯೆಯರ ಲೇಪನಕಾಲವು ಪೂರೈಸುವುದಕ್ಕೆ ಸುಗಂಧತೈಲದ ಪ್ರಯೋಗದಲ್ಲಿ ಆರು ತಿಂಗಳು, ಕಾಂತಿವರ್ಧಕ ಪರಿಮಳ ದ್ರವ್ಯಗಳ ಪ್ರಯೋಗದಲ್ಲಿ ಆರು ತಿಂಗಳು ಹೀಗೆ ಒಂದು ವರ್ಷ ಕಳೆಯಿತು. ಇದಾದನಂತರ ಪದ್ಧತಿಯ ಪ್ರಕಾರ ಸಿಂಗರಿಸಿಕೊಂಡ ಪ್ರತಿಯೊಬ್ಬ ಕನ್ಯೆಯು ತನ್ನ ಸರದಿಯಂತೆ ಅರಸನ ಬಳಿಗೆ ಹೋಗಬೇಕಿತ್ತು.</verse>
				<verse number="13">ಹೀಗೆ ತನ್ನ ಸರದಿ ಬಂದಾಗ ತನ್ನೊಡನೆ ತೆಗೆದುಕೊಂಡು ಹೋಗಲು ಇಷ್ಟಪಡುವುದನ್ನೆಲ್ಲಾ ಆಕೆಗೆ ಒದಗಿಸಲಾಗುತ್ತಿತ್ತು.</verse>
				<verse number="14">ಆಕೆ ರಾಜನಿವಾಸಕ್ಕೆ ಸಾಯಂಕಾಲ ಹೋದವಳು ಮಾರನೆಯ ದಿನ ಬೆಳಗ್ಗೆ ಅರಸನ ಉಪಪತ್ನಿಗಳ ಪಾಲಕನಾದ ಶವಷ್ಗಜನೆಂಬ ರಾಜಕಂಚುಕಿಯ ವಶದಲ್ಲಿದ್ದ ಎರಡನೆಯ ಅಂತಃಪುರಕ್ಕೆ ಬರಬೇಕಾಗಿತ್ತು. ಅರಸನು ಅವಳನ್ನು ಬಯಸಿ ಅವಳ ಹೆಸರು ಹಿಡಿದು ಕರೆಕಳುಹಿಸಿದ ಹೊರತು ಅವಳು ಪುನಃ ಅರಸನ ಬಳಿಗೆ ಹೋಗುವಂತಿರಲಿಲ್ಲ.</verse>
				<verse number="15">ಹೀಗೆ ಅರಸನ ಬಳಿಗೆ ಹೋಗಲು ಮೊರ್ದೆಕೈಯ ದತ್ತುಮಗಳೂ ಅವನ ಚಿಕ್ಕಪ್ಪನಾದಅಬಿಹೈಲನ ಮಗಳೂ ಆದ ಎಸ್ತೇರಳ ಸರದಿ ಬಂದಾಗ, ಅಂತಃಪುರಪಾಲಕ ಹೇಗೈ ಎಂಬ ರಾಜಕಂಚುಕಿ ನೇಮಿಸಿದ್ದನ್ನೇ ಹೊರತು ಬೇರಾವುದನ್ನೂ ಆಕೆ ಕೇಳಲಿಲ್ಲ. ನೋಡಿದವರೆಲ್ಲರೂ ಆಕೆಯನ್ನು ಬಹುವಾಗಿ ಮೆಚ್ಚುತ್ತಿದ್ದರು.</verse>
				<verse number="16">ಅರಸ ಅಹಷ್ವೇರೋಷನ ಆಳ್ವಿಕೆಯ ಏಳನೇ ವರ್ಷದ ಹತ್ತನೆ ತಿಂಗಳಾದ ಪುಷ್ಯಮಾಸದಲ್ಲಿ (ತೇಬೆತ್ ಮಾಸದಲ್ಲಿ) ಆಕೆಯನ್ನು ಅರಸನ ಬಳಿಗೆ ಕರೆತರಲಾಯಿತು.</verse>
				<verse number="17">ಅರಸನು, ಎಲ್ಲಾ ಸ್ತ್ರೀಯರಿಗಿಂತಲೂ ಹೆಚ್ಚಾಗಿ ಎಸ್ತೇರಳನ್ನು ಮೆಚ್ಚಿಕೊಂಡನು. ಎಲ್ಲಾ ಕನ್ಯೆಯರ ಪೈಕಿ ಅರಸನ ವಿಶೇಷ ದಯೆಗೂ ಪ್ರೀತಿಗೂ ಪಾತ್ರಳಾದಳು. ಈ ಕಾರಣ, ಅರಸನು ಆಕೆಯ ತಲೆಯ ಮೇಲೆ ರಾಜಮುಕುಟವನ್ನಿಟ್ಟು ವಷ್ಟಿರಾಣಿಗೆ ಬದಲಾಗಿ ಆಕೆಯನ್ನು ತನ್ನ ಪಟ್ಟದರಸಿಯನ್ನಾಗಿ ಆರಿಸಿಕೊಂಡನು.</verse>
				<verse number="18">ತನ್ನ ಎಲ್ಲಾ ಪದಾಧಿಕಾರಿಗಳಿಗೂ ಪರಿವಾರದವರಿಗೂ ಎಸ್ತೇರಳ ಗೌರವಾರ್ಥವಾಗಿ ಒಂದು ಭಾರಿ ಔತಣವನ್ನೇರ್ಪಡಿಸಿದನು. ತನ್ನ ಎಲ್ಲಾ ಸಂಸ್ಥಾನಗಳಲ್ಲಿ, ಸೆರೆಯಲ್ಲಿದ್ದ ಬಂಧಿತರಿಗೆ ಬಿಡುಗಡೆಯನ್ನು ಘೋಷಿಸಿದನು. ರಾಜಮರ್ಯಾದೆಗೆ ತಕ್ಕಂತೆ ಪ್ರಜೆಗಳಿಗೆ ಉದಾರವಾಗಿ ದಾನಧರ್ಮಗಳನ್ನು ಮಾಡಿದನು.</verse>
				<verse number="19">ಕನ್ಯೆಯರನ್ನು ಎರಡನೆಯ ಸಾರಿ ಕೂಡುಸುವಾಗ, ಮೊರ್ದೆಕೈ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡಿದ್ದನು.</verse>
				<verse number="20">ಮೊರ್ದೆಕೈಯ ಆದೇಶದಂತೆ ಎಸ್ತೇರಳು ತನ್ನ ಬಂಧುಬಳಗದವರ ಬಗ್ಗೆಯಾಗಲಿ, ಸ್ವಜನರ ಬಗ್ಗೆಯಾಗಲಿ ಯಾರಿಗೂ ತಿಳಿಸಿರಲಿಲ್ಲ. (ಮೊರ್ದೆಕೈಯ) ಆರೈಕೆಯಲ್ಲಿದ್ದಾಗ ಆಕೆ ಯಾವ ರೀತಿ ನಡೆದುಕೊಂಡಿದ್ದಳೋ ಹಾಗೆಯೇ ಪ್ರಸ್ತುತಕಾಲದಲ್ಲೂ ಆತನ ಆಜ್ಞೆಯನ್ನು ಪಾಲಿಸುತ್ತಿದ್ದಳು.</verse>
				<verse number="21">ಆ ದಿನಗಳಲ್ಲಿ ಮೊರ್ದೆಕೈ, ಎಂದಿನಂತೆ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡಿದ್ದಾಗ ದ್ವಾರಪಾಲಕರಾದ ಬಿಗೆತಾನ್ ಮತ್ತು ತೆರೆಷ್ ಎಂಬಿಬ್ಬರು ರಾಜಕಂಚುಕಿಗಳು ಅರಸನ ವಿರುದ್ಧ ಕೈಯೆತ್ತಬೇಕು ಎಂದು ಒಳಸಂಚು ಮಾಡಿದರು.</verse>
				<verse number="22">ಈ ವಿಷಯ ಮೊರ್ದೆಕೈಗೆ ತಿಳಿದುಬಂದಾಗ, ಆತನು ಎಸ್ತೇರಳಿಗೆ ತಿಳಿಸಿದನು. ರಾಣಿಯು ಅವನ ಹೆಸರನ್ನು ಅರಸನಿಗೆ ಹೇಳಿ ಅವರು ನಡೆಸುತ್ತಿದ್ದ ಆ ಪಿತೂರಿ ಬಗ್ಗೆ ತಿಳಿಸಿದಳು.</verse>
				<verse number="23">ಈ ವಿಷಯ ವಿಚಾರಣೆಗೆ ಬಂದು ಅದು ಸತ್ಯಸಂಗತಿಯೆಂದು ರುಜುವಾತು ಆಗಲು, ಆ ಇಬ್ಬರು ಪಿತೂರಿಗಾರರನ್ನು ಗಲ್ಲಿಗೇರಿಸಲಾಯಿತು. ಈ ಸಂಗತಿಯನ್ನು ರಾಜನ ದಿನಚರಿಯ ಪುಸ್ತಕದಲ್ಲಿ ಬರೆದಿಡಲಾಯಿತು.</verse>
			</chapter>
			<chapter number="3">
				<verse number="1">ಇದಾದನಂತರ ಅರಸ ಅಹಷ್ವೇರೋಷನು ಆಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನನ್ನು ಉನ್ನತ ಪದವಿಗೇರಿಸಿ ಅವನನ್ನು ಹಿರಿಯ ಅಧಿಕಾರಿಯನ್ನಾಗಿ ಮಾಡಿ ತನ್ನ ಎಲ್ಲಾ ಪದಾಧಿಕಾರಿಗಳಲ್ಲಿ ಅವನಿಗೆ ಪ್ರಥಮಸ್ಥಾನವನ್ನು ಅನುಗ್ರಹಿಸಿದನು.</verse>
				<verse number="2">ಅರಸನ ಆಜ್ಞಾನುಸಾರ ಅರಮನೆಯಲ್ಲಿದ್ದ ಪರಿಚಾರಕರೆಲ್ಲರೂ ಅವನಿಗೆ ನಮಸ್ಕರಿಸುತ್ತಿದ್ದರು. ಆದರೆ ಮೊರ್ದೆಕೈ ಮಾತ್ರ ಹಾಗೆ ಮಾಡುತ್ತಿರಲಿಲ್ಲ.</verse>
				<verse number="3">ಇದನ್ನು ಗಮನಿಸಿದ ಅರಮನೆಯ ದ್ವಾರಪಾಲಕರು, “ನೀನು ಅರಸನ ಆಜ್ಞೆಯನ್ನು ಮೀರುವುದೇಕೆ?” ಎಂದು ಮೊರ್ದೆಕೈಯನ್ನು ಕೇಳಿದರು.</verse>
				<verse number="4">ಹೀಗೆ ಅವರು ಪ್ರತಿದಿನ ಅವನಿಗೆ ಹೇಳಿದರೂ ಅವನು ಅವರ ಮಾತಿಗೆ ಕಿವಿಗೊಡಲಿಲ್ಲ. ತಾನು ಯೆಹೂದ್ಯನೆಂದು ಹೇಳಿಕೊಳ್ಳುತ್ತಿದ್ದ ಮೊರ್ದೆಕೈಯ ಹಟವು ಎಲ್ಲಿಯವರೆಗೆ ಸಾಗುವುದೊ ನೋಡಿಯೇ ಬಿಡಬೇಕೆಂದು ಅವನ ಈ ವರ್ತನೆಯ ಬಗ್ಗೆ ಹಾಮಾನನಿಗೆ ದೂರು ಹೇಳಿದರು.</verse>
				<verse number="5">ಮೊರ್ದೆಕೈಯು ತನಗೆ ಬಾಗಿ ನಮಸ್ಕಾರ ಮಾಡದಿದ್ದುದನ್ನು ಕಂಡು ಹಾಮಾನನು ಅವನ ಮೇಲೆ ಕಡುಗೋಪಗೊಂಡನು.</verse>
				<verse number="6">ಅವನು ಮೊರ್ದೆಕೈ ಒಬ್ಬನ ಮೇಲೆ ಕೈಮಾಡುವುದು ಸಾಲದೆಂದೆಣಿಸಿ ಇವನು ಯೆಹೂದ್ಯ ಜನಾಂಗದವನೆಂದು ಕೇಳಿದ ಮೇಲೆ ಅಹಷ್ವೇರೋಷನ ರಾಜ್ಯದಲ್ಲಿದ್ದ ಇವನ ಬಂಧುಬಳಗದವರನ್ನೆಲ್ಲಾ, ಅಂದರೆ ಎಲ್ಲಾ ಯೆಹೂದ್ಯರನ್ನು ಸಂಹರಿಸಲು ತೀರ್ಮಾನಿಸಿದನು.</verse>
				<verse number="7">ಅರಸ ಅಹಷ್ವೇರೋಷನ ಆಳ್ವಿಕೆಯ ಹನ್ನೆರಡನೆಯ ವರ್ಷದ ಮೊದಲನೆಯ ತಿಂಗಳು ಆದ ಚೈತ್ರಮಾಸದಲ್ಲಿ ಹಾಮಾನನ ಮುಂದೆ ಶುಭಮಾಸವೂ ಶುಭದಿನವೂ ಯಾವುದು ಎಂದು ತಿಳಿದುಕೊಳ್ಳಲು ‘ಪೂರ’ನ್ನು ಅಂದರೆ ಚೀಟನ್ನು ಹಾಕಲು ಚೀಟು ಹನ್ನೆರಡನೆ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನಕ್ಕೆ ಬಿತ್ತು.</verse>
				<verse number="8">ಹಾಮಾನನು ಅರಸ ಅಹಷ್ವೇರೋಷನಿಗೆ ಹೀಗೆಂದನು: “ನಿಮ್ಮ ರಾಜ್ಯದ ಎಲ್ಲಾ ಸಂಸ್ಥಾನಗಳಲ್ಲಿ ವಾಸಿಸುವ ಒಂದು ಜನಾಂಗವಿದೆ. ಅದು ಇತರ ಜನಾಂಗಗಳ ಮಧ್ಯೆ ಹರಡಿಕೊಂಡಿದ್ದರೂ ತನ್ನ ರೀತಿನೀತಿಗಳಲ್ಲಿ ಅವರಿಂದ ಪ್ರತ್ಯೇಕವಾಗಿಯೇ ಉಳಿಯುತ್ತದೆ. ಅರಸರ ನಿಯಮಗಳನ್ನಂತೂ ಈ ಜನಾಂಗದವರು ಅನುಸರಿಸುವುದೇ ಇಲ್ಲ. ಹೀಗಿರುವಲ್ಲಿ ಇಂಥವರನ್ನು ಅರಸರು ಸುಮ್ಮನೆ ಬಿಡುವುದು ಸರಿಯಲ್ಲ.</verse>
				<verse number="9">ಅರಸರಿಗೆ ಸಮ್ಮತಿ ಆದರೆ ಅವರನ್ನು ನಿರ್ಮೂಲಮಾಡುವಂತೆ ಆಜ್ಞೆ ಒಂದನ್ನು ಹೊರಡಿಸಬೇಕು. ಹಾಗೆ ಮಾಡಿದ್ದಲ್ಲಿ, ನಾನು ರಾಜಭಂಡಾರಕ್ಕಾಗಿ 340,000 ಕಿಲೋಗ್ರಾಂ ಬೆಳ್ಳಿಯನ್ನು ಖಜಾಂಚಿಯರ ಕೈಗೊಪ್ಪಿಸುವೆನು,” ಎಂದು ಹೇಳಿದನು.</verse>
				<verse number="10">ಇದನ್ನು ಕೇಳಿದ ಅರಸನು ತನ್ನ ಕೈಬೆರಳಿನಲ್ಲಿದ್ದ ಮುದ್ರೆ ಉಂಗುರವನ್ನು ತೆಗೆದು ಆಗಾಗನ ವಂಶಸ್ಥನೂ ಹೆಮ್ಮೆದಾತನ ಮಗನೂ ಯೆಹೂದ್ಯರ ಕಡುವೈರಿಯೂ ಆದ ಹಾಮಾನನಿಗೆ ಕೊಟ್ಟು,</verse>
				<verse number="11">“ಆ ಬೆಳ್ಳಿ ನಿನ್ನಲ್ಲೇ ಇರಲಿ: ಆ ಜನರಿಗಾದರೋ ನಿನಗೆ ಉಚಿತವೆಂದು ಕಂಡುಬಂದ ರೀತಿಯಲ್ಲಿ ನೀನು ಮಾಡಬಹುದು,” ಎಂದು ಹೇಳಿದನು.</verse>
				<verse number="12">ಮೊದಲನೇ ತಿಂಗಳ ಹದಿಮೂರನೆಯ ದಿನ ರಾಜಲೇಖಕರನ್ನು ಕರೆಸಲಾಯಿತು. ಇವರು ಹಾಮಾನನ ಆಜ್ಞಾನುಸಾರ ಉಪರಾಜರಿಗೂ ಆಯಾ ಸಂಸ್ಥಾನಾಧಿಕಾರಿಗಳಿಗೂ ಆಯಾ ಜನಾಂಗಗಳ ಅಧಿಪತಿಗಳಿಗೂ ಪತ್ರಗಳನ್ನು ಅವರವರ ಸ್ವದೇಶಿ ಲಿಪಿಗಳಲ್ಲೂ ಭಾಷೆಗಳಲ್ಲೂ ಬರೆದರು. ಅರಸ ಅಹಷ್ವೇರೋಷನ ಹೆಸರಿನಲ್ಲೇ ಲಿಖಿತವಾದ ಈ ಪತ್ರಗಳು ಅಧಿಕೃತ ರಾಜಮುದ್ರೆಯನ್ನು ಹೊಂದಿದ್ದವು.</verse>
				<verse number="13">ಪತ್ರಗಳನ್ನು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳಿಸಲಾಯಿತು. ಅವುಗಳಲ್ಲಿ ಈ ರೀತಿ ಬರೆದಿತ್ತು: “ಒಂದೇ ದಿನದಲ್ಲಿ, ಅಂದರೆ, ಹನ್ನೆರಡನೆ ತಿಂಗಳಾದ ಫಾಲ್ಗುಣ ಮಾಸದ ಹದಿಮೂರನೆಯ ದಿನದಲ್ಲಿ ಹಿರಿಯರು, ಕಿರಿಯರು, ಮಕ್ಕಳು, ಮಹಿಳೆಯರೆನ್ನದೆ ನಿಮ್ಮ ಮಧ್ಯೆ ವಾಸಿಸುವ ಎಲ್ಲಾ ಯೆಹೂದ್ಯರನ್ನು ಕೊಂದುಹಾಕಿ, ನಿರ್ಮೂಲಮಾಡಿ, ನಿರ್ನಾಮಗೊಳಿಸಿ.</verse>
				<verse number="14">ಅವರ ಆಸ್ತಿಯನ್ನು ಕೊಳ್ಳೆಹೊಡೆಯಿರಿ. ಎಲ್ಲರೂ ಆ ದಿನಕ್ಕೆ ಸಿದ್ಧರಾಗಿರುವಂತೆ ಈ ಪತ್ರದ ಪ್ರತಿಯು ಪ್ರತಿಯೊಂದು ಸಂಸ್ಥಾನದಲ್ಲೂ ರಾಜಾಜ್ಞೆಯಂತೆ ಪ್ರಕಟವಾಗಲಿ.”</verse>
				<verse number="15">ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೆ ಅಂಚೆಯವರು ರಾಜಾಜ್ಞೆಯ ಮೇರೆಗೆ ತ್ವರಿತವಾಗಿ ಹೊರಟರು. ಅರಸನಾದರೋ ಹಾಮಾನನೊಡನೆ ಮದ್ಯಪಾನ ಮಾಡಲು ಕುಳಿತುಕೊಂಡನು. ಅತ್ತ ಶೂಷನ್ ನಗರದಲ್ಲಿ ಎಲ್ಲೆಲ್ಲೂ ತಳಮಳ ಉಂಟಾಯಿತು.</verse>
			</chapter>
			<chapter number="4">
				<verse number="1">ನಡೆದ ಸಂಗತಿಯನ್ನೆಲ್ಲಾ ಕೇಳಿದಾಗ, ಮೊರ್ದೆಕೈ ತನ್ನ ಬಟ್ಟೆಗಳನ್ನು ಹರಿದು ಗೋಣಿತಟ್ಟನ್ನು ಉಟ್ಟು, ಬೂದಿಯನ್ನು ಸುರಿದುಕೊಂಡು ನಗರದ ಮಧ್ಯೆ ಹೋಗುತ್ತಾ ಅಪಾರ ದುಃಖದಿಂದ ಗೋಳಾಡಿದನು.</verse>
				<verse number="2">ಅದೇ ಸ್ಥಿತಿಯಲ್ಲಿ ಅರಮನೆಯ ಹೆಬ್ಬಾಗಿಲವರೆಗೂ ಬಂದನು. ಗೋಣಿತಟ್ಟನ್ನು ಉಟ್ಟವರು ಯಾರೂ ಒಳಗೆ ಪ್ರವೇಶಿಸಕೂಡದೆಂಬ ನಿಷೇಧಾಜ್ಞೆ ಜಾರಿಯಲ್ಲಿ ಇತ್ತು.</verse>
				<verse number="3">ಅರಸನ ಆಜ್ಞೆಯೂ ನಿರ್ಣಯವೂ ಪ್ರಕಟವಾದ ಸಂಸ್ಥಾನಗಳಲ್ಲೆಲ್ಲಾ ಯೆಹೂದ್ಯರೊಳಗೆ ಅತೀವ ದುಃಖವುಂಟಾಗಿ ಅನೇಕರು ಉಪವಾಸ ಕೈಗೊಂಡರು. ರೋದನ-ಆಕ್ರಂದನಗಳೊಡನೆ ಗೋಣಿತಟ್ಟನ್ನು ಹೊದ್ದು ಬೂದಿಯಲ್ಲಿ ಕುಳಿತುಕೊಂಡರು.</verse>
				<verse number="4">ಎಸ್ತೇರಳ ದಾಸಿಯರೂ ಕಂಚುಕಿಗಳೂ ಈ ವಿಷಯವನ್ನು ಆಕೆಗೆ ತಿಳಿಸಿದಾಗ ಆಕೆ ಬಹು ವ್ಯಸನಾಕ್ರಾಂತಳಾದಳು. ಉಟ್ಟ ಗೋಣಿತಟ್ಟನ್ನು ತೆಗೆದುಹಾಕಿ, ವಸ್ತ್ರಗಳನ್ನು ಧರಿಸಿಕೊಳ್ಳುವಂತೆ ಮೊರ್ದೆಕೈಗೆ ಉಡುಪನ್ನು ಕಳುಹಿಸಿಕೊಟ್ಟಳು. ಅವನಾದರೋ ಅವುಗಳನ್ನು ಸ್ವೀಕರಿಸಲಿಲ್ಲ.</verse>
				<verse number="5">ಆಗ ಎಸ್ತೇರಳು ತನ್ನ ಸೇವೆಗಾಗಿ ನೇಮಿಸಲಾಗಿದ್ದ ರಾಜಕಂಚುಕಿಗಳಲ್ಲಿ ಒಬ್ಬನಾದ ಹತಾಕನನ್ನು ಕರೆದು, ಮೊರ್ದೆಕೈ ಬಳಿಗೆ ಕಳುಹಿಸಿ, ನಡೆದ ಸಂಗತಿ ಏನೆಂದೂ, ಮೊರ್ದೆಕೈಯ ಈ ವರ್ತನೆಗೆ ಕಾರಣವಾದರೂ ಯಾವುದೆಂದು ವಿಚಾರಿಸಿಕೊಂಡು ಬರುವಂತೆ ಹೇಳಿದಳು.</verse>
				<verse number="6">ಅಂತೆಯೆ, ಹತಾಕನು ಅರಮನೆಯ ಹೆಬ್ಬಾಗಿಲ ಮುಂದಿರುವ ನಗರದ ಬಯಲಿಗೆ, ಮೊರ್ದೆಕೈಯನ ಬಳಿಗೆ ಹೋದಾಗ,</verse>
				<verse number="7">ಅವನು, ನಡೆದ ಎಲ್ಲಾ ವಿಷಯಗಳನ್ನು ಮತ್ತು ಯೆಹೂದ್ಯರನ್ನು ನಾಶಮಾಡಲು ಅನುಮತಿ ಪಡೆದುಕೊಳ್ಳುವುದಕ್ಕಾಗಿ ಹಾಮಾನನು ರಾಜಭಂಡಾರಕ್ಕೆ ಕೊಡಲು ವಾಗ್ದಾನಮಾಡಿದ ನಿಗದಿತ ಹಣದ ವಿಷಯವನ್ನು ಅವನಿಗೆ ವಿವರಿಸಿ ಹೇಳಿದನು.</verse>
				<verse number="8">ಅಲ್ಲದೆ ಯೆಹೂದ್ಯರನ್ನೆಲ್ಲಾ ಸಂಹರಿಸಬಿಡುವುದಕ್ಕೋಸ್ಕರ ಶೂಷನ್ ನಗರದಲ್ಲಿ ಪ್ರಕಟಗೊಂಡ ರಾಜಶಾಸನದ ಒಂದು ಪ್ರತಿಯನ್ನು ಅವನ ಕೈಗಿತ್ತನು. ಅದನ್ನು ಎಸ್ತೇರಳಿಗೆ ತೋರಿಸಿ ವಿವರಿಸುವಂತೆಯೂ ಆಕೆ ಅರಸನ ಸಮ್ಮುಖಕ್ಕೆ ಹೋಗಿ, ಆತ ದಯೆತೋರುವಂತೆ ಆತನ ಸನ್ನಿಧಿಯಲ್ಲಿ ತನ್ನ ಜನರಿಗೋಸ್ಕರ ಬಿನ್ನಹಮಾಡುವಂತೆ ಆಕೆಗೆ ತಿಳಿಸಬೇಕೆಂತಲೂ ಹೇಳಿಕಳುಹಿಸಿದನು.</verse>
				<verse number="9">ಹತಾಕನು ಎಸ್ತೇರಳ ಬಳಿಗೆ ಹಿಂದಿರುಗಿ ಆಕೆಗೆ ಮೊರ್ದೆಕೈ ಹೇಳಿದ ಎಲ್ಲಾ ಮಾತುಗಳನ್ನು ತಿಳಿಸಿದನು.</verse>
				<verse number="10">ಎಸ್ತೇರಳು ಮತ್ತೊಮ್ಮೆ, ಅವನನ್ನು ಮೊರ್ದೆಕೈಯ ಬಳಿಗೆ ಕಳುಹಿಸಿ,</verse>
				<verse number="11">“ಅರಸನು ಹೇಳಿಕಳುಹಿಸಿದ ಹೊರತು ಅವನ ಬಳಿಗೆ ಅರಮನೆಯ ಒಳಾಂಗಣಕ್ಕೆ ಹೋಗುವವರು ಮರಣದಂಡನೆಗೆ ಗುರಿಯಾಗುವರು ಎಂಬ ನಿಷೇಧಾಜ್ಞೆ ಸ್ತ್ರೀಪುರುಷರೆನ್ನದೆ ಎಲ್ಲರಿಗೂ ಅನ್ವಯಿಸುತ್ತದೆ. ಯಾರ ಕಡೆಗೆ ಅವನು ತನ್ನ ಸ್ವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರು. ಇದು ಅರಸನ ಎಲ್ಲಾ ಸೇವಕರಿಗೂ ಸಂಸ್ಥಾನಗಳ ಎಲ್ಲಾ ನಿವಾಸಿಗಳಿಗೂ ತಿಳಿದ ವಿಷಯ; ನನಗಂತೂ ಕಳೆದ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವುದಕ್ಕೆ ಆಮಂತ್ರಣವೇ ಬರಲಿಲ್ಲ,” ಎಂದು ತಿಳಿಸುವಂತೆ ಹೇಳಿದಳು.</verse>
				<verse number="12">ಹತಾಕನು, ಎಸ್ತೇರಳ ಈ ಸಂದೇಶವನ್ನು ಮೊರ್ದೆಕೈಗೆ ತಿಳಿಸಲು ಅವನು ಪುನಃ ಎಸ್ತೇರಳಿಗೆ,</verse>
				<verse number="13">“ನೀನು ಅರಮನೆಯಲ್ಲಿದ್ದ ಮಾತ್ರಕ್ಕೆ ಯೆಹೂದ್ಯರೆಲ್ಲಾ ನಾಶವಾದರೂ ನೀನೊಬ್ಬಳು ಮಾತ್ರ ಉಳಿದುಕೊಳ್ಳುವೆಯೆಂದು ಭಾವಿಸಬೇಡ;</verse>
				<verse number="14">ನೀನೀಗ ಸುಮ್ಮನಿದ್ದುಬಿಟ್ಟರೆ ಬೇರಾವ ಕಡೆಯಿಂದಲೂ ಯೆಹೂದ್ಯರಿಗೆ ಸಹಾಯವಾಗಲಿ, ವಿಮೋಚನೆಯಾಗಲಿ ದೊರಕದು. ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗಿಹೋಗುವೆ. ಇದಲ್ಲದೆ ಇಂಥ ಸಂದರ್ಭಕ್ಕಾಗಿಯೇ ನೀನು ಪಟ್ಟಕ್ಕೆ ಬಂದಿರಬಹುದು, ಯಾರು ಬಲ್ಲರು?” ಎಂದು ಹೇಳಿಕಳುಹಿಸಿದನು.</verse>
				<verse number="15">ಆಗ ಎಸ್ತೇರಳು ಮೊರ್ದೆಕೈಯನಿಗೆ, “ನೀನು ಹೋಗಿ ಶೂಷನ್ ನಗರದಲ್ಲಿ ಇರುವ ಯೆಹೂದ್ಯರನ್ನೆಲ್ಲಾ ಸಭೆಸೇರಿಸು. ಎಲ್ಲರೂ ಹಗಲಿರುಳೆನ್ನದೆ ಮೂರು ದಿನ ಅನ್ನಪಾನಗಳನ್ನು ತೊರೆದು ನನಗೋಸ್ಕರ ಉಪವಾಸವನ್ನು ಕೈಗೊಳ್ಳಲಿ. ನನ್ನ ದಾಸಿಯರೊಡನೆ ನಾನೂ ಉಪವಾಸ ಕೈಗೊಳ್ಳುವೆನು. ಅನಂತರ ಅರಸನ ಆಜ್ಞೆಯನ್ನು ಮೀರಿಯಾದರೂ ನಾನು ಆತನ ಬಳಿಗೆ ಹೋಗುವೆನು, ಸತ್ತರೂ ಸಾಯುವೆನು,” ಎಂದು ಹೇಳಿಕಳುಹಿಸಿದಳು.</verse>
				<verse number="16"></verse>
				<verse number="17">ಮೊರ್ದೆಕೈ ಹಿಂದಿರುಗಿ ಹೋಗಿ ಎಸ್ತೇರಳು ಹೇಳಿದಂತೆಯೇ ಮಾಡಿದನು.</verse>
			</chapter>
			<chapter number="5">
				<verse number="1">ಮೂರನೆಯ ದಿನ ಎಸ್ತೇರಳು ರಾಜವಸ್ತ್ರಾಭರಣಗಳನ್ನು ಧರಿಸಿ ಅರಮನೆಯ ಒಳಗಣ ಪ್ರಾಕಾರವನ್ನು ಪ್ರವೇಶಿಸಿ ರಾಜಮಂದಿರದ ಎದುರಿನಲ್ಲಿ ನಿಂತಳು. ಅರಸನು ಆ ಮಂದಿರದೊಳಗೆ ರಾಜಸಿಂಹಾಸನದ ಮೇಲೆ ಬಾಗಿಲಿಗೆ ಎದುರಾಗಿ ಕುಳಿತಿದ್ದನು.</verse>
				<verse number="2">ಪ್ರಾಕಾರದಲ್ಲಿ ನಿಂತಿದ್ದ ಎಸ್ತೇರ್‍ರಾಣಿಯನ್ನು ಅವನು ಕಂಡೊಡನೆ, ಆಕೆಯೆಡೆ ಮೆಚ್ಚುಗೆ ತೋರಿ ತನ್ನ ಕೈಯಲ್ಲಿದ್ದ ಸ್ವರ್ಣರಾಜದಂಡವನ್ನು ಆಕೆಯ ಕಡೆಗೆ ಚಾಚಿದನು. ಎಸ್ತೇರಳು ಸಮೀಪಕ್ಕೆ ಬಂದು ರಾಜದಂಡದ ತುದಿಯನ್ನು ಮುಟ್ಟಿದಳು.</verse>
				<verse number="3">ಅರಸನು ಆಕೆಗೆ, “ಎಸ್ತೇರ್‍ರಾಣಿಯೇ, ನಿನ್ನ ಅಪೇಕ್ಷೆ ಏನು? ನಿನ್ನ ವಿಜ್ಞಾಪನೆ ಏನು? ನೀನು ನನ್ನ ರಾಜ್ಯದ ಅರ್ಧಭಾಗವನ್ನು ಕೇಳಿದರೂ ಸರಿ, ನಾನದನ್ನು ನಿನಗೆ ಕೊಡುವೆನು,” ಎಂದನು.</verse>
				<verse number="4">ಪ್ರತ್ಯುತ್ತರವಾಗಿ ಎಸ್ತೇರಳು, “ಅರಸರ ಚಿತ್ತವಾದರೆ ನಾನು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ತಾವು ಹಾಮಾನನೊಂದಿಗೆ ದಯಮಾಡಿಸಬೇಕು,” ಎಂದು ವಿನಂತಿಸಿದಳು.</verse>
				<verse number="5">ಕೂಡಲೆ ಅರಸನು, “ಎಸ್ತೇರಳ ವಿಜ್ಞಾಪನೆಯನ್ನು ಈಡೇರಿಸಲು ಹಾಮಾನನನ್ನು ತ್ವರೆಪಡಿಸಿರಿ,” ಎಂದು ಆಜ್ಞಾಪಿಸಿದನು; ಎಸ್ತೇರಳು ಏರ್ಪಡಿಸಿದ್ದ ಔತಣಕ್ಕೆ ಹಾಮಾನನೊಂದಿಗೆ ಹೋದನು.</verse>
				<verse number="6">ದ್ರಾಕ್ಷಾರಸ ಪಾನಮಾಡುತ್ತಿರುವಾಗ ಅರಸನು ಮತ್ತೊಮ್ಮೆ ಎಸ್ತೇರಳಿಗೆ, “ನಿನ್ನ ವಿಜ್ಞಾಪನೆ ಯಾವುದು ಹೇಳು. ನಾನದನ್ನು ನೆರವೇರಿಸುವೆನು. ನೀನು ನನ್ನ ರಾಜ್ಯದ ಅರ್ಧಭಾಗವನ್ನು ಕೇಳಿದರೂ ಸರಿ, ನಾನದನ್ನು ನಿನಗೆ ಕೊಡುವೆನು,” ಎನ್ನಲು</verse>
				<verse number="7">ಎಸ್ತೇರಳು, “ತಾವು ನನ್ನ ಮೇಲೆ ಕೃಪಾಕಟಾಕ್ಷವಿಟ್ಟು ನಾನು ಕೇಳುವುದನ್ನು ಅನುಗ್ರಹಿಸುವುದಕ್ಕೂ ನನ್ನ ವಿಜ್ಞಾಪನೆಯನ್ನು ನೆರವೇರಿಸುವುದಕ್ಕೂ ಚಿತ್ತವಾದರೆ,</verse>
				<verse number="8">ನಾನು ತಮಗೋಸ್ಕರ ಮಾಡಿಸಲಿರುವ ಔತಣಕ್ಕೆ ನಾಳೆಯೂ ಹಾಮಾನನೊಂದಿಗೆ ದಯಮಾಡಿಸಬೇಕು. ಆಗ ತಾವು ಹೇಳಿದಂತೆ ನಾನು ಮಾಡುವೆನು. ಇದೇ ನನ್ನ ದೈನ್ಯ ಮನವಿ,” ಎಂದು ಉತ್ತರವಿತ್ತಳು.</verse>
				<verse number="9">ಅಂದು ಹಾಮಾನನು ಹರ್ಷಭರಿತನಾಗಿ ಮನೆಗೆ ಹಿಂದಿರುಗುತ್ತಿರುವಾಗ ಮೊರ್ದೆಕೈ ತನಗೆ ಭಯಪಡದೆ, ತನ್ನ ಮುಂದೆ ಏಳದೆಯೂ ಅರಮನೆಯ ಹೆಬ್ಬಾಗಿಲಿನಲ್ಲಿ ಕುಳಿತುಕೊಂಡೇ ಇರುವುದನ್ನು ಕಂಡು ಅವನ ಮೇಲೆ ಕಡುಕೋಪಗೊಂಡನು.</verse>
				<verse number="10">ಆದರೂ ಸಹನೆ ಕಳೆದುಕೊಳ್ಳದೆ ಮನೆಗೆ ಹೋಗಿ ತನ್ನ ಆಪ್ತರನ್ನೂ ತನ್ನ ಪತ್ನಿ ಜೆರೆಷಳನ್ನೂ ಕರೆಯಿಸಿದನು.</verse>
				<verse number="11">ಅವರ ಮುಂದೆ ತನ್ನ ಸಿರಿಸಂಪತ್ತನ್ನೂ ಪುತ್ರಲಾಭಾತಿಶಯವನ್ನೂ ಅರಸನು ತನ್ನನ್ನು ಸನ್ಮಾನಿಸಿ ಎಲ್ಲಾ ಪದಾಧಿಕಾರಿಗಳಲ್ಲಿಯೂ ರಾಜಸೇವಕರಲ್ಲಿಯೂ ತನಗೆ ಶ್ರೇಷ್ಠಸ್ಥಾನವನ್ನು ಕೊಟ್ಟದ್ದನ್ನೂ ವರ್ಣಿಸಿದನು.</verse>
				<verse number="12">ಇದಲ್ಲದೆ, ಎಸ್ತೇರ್‍ರಾಣಿಯೇ ಸ್ವತಃ ಏರ್ಪಡಿಸಿದ ಔತಣಕ್ಕೆ ಅರಸನ ಜೊತೆಯಲ್ಲಿ ತನ್ನನ್ನಲ್ಲದೆ ಬೇರಾರನ್ನು ಕರೆದಿಲ್ಲವೆಂತಲೂ ಮರುದಿನವೂ ಅರಸನೊಟ್ಟಿಗೆ ಔತಣ ಮಾಡಲು ತನ್ನನ್ನು ಆಹ್ವಾನಿಸಿರುವಳೆಂದೂ ತಿಳಿಸಿದನು.</verse>
				<verse number="13">ಆದರೂ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಿಲಿನಲ್ಲಿ ತನ್ನ ಕಣ್ಣೆದುರು ಕುಳಿತಿರುವವರೆಗೂ ತನಗೆ ಯಾವ ಪ್ರಯೋಜನವೂ ಇಲ್ಲವೆಂದು ಹೇಳಿದನು.</verse>
				<verse number="14">ಅದಕ್ಕೆ ಅವನ ಪತ್ನಿ ಜೆರೆಷಳೂ ಹಾಗೂ ಅವನ ಆಪ್ತರೂ ಅವನಿಗೆ, “ಅರಸನ ಅಪ್ಪಣೆಯನ್ನು ಪಡೆದು ಮೊರ್ದೆಕೈಯನ್ನು ಗಲ್ಲಿಗೇರಿಸುವ ಸಲುವಾಗಿ ಇಪ್ಪತ್ತೆರಡು ಮೀಟರ್ ಉದ್ದದ ಗಲ್ಲುಮರವೊಂದನ್ನು ಸಿದ್ಧಮಾಡಿಸಿರಿ. ಅನಂತರ ನೀವು ನೆಮ್ಮದಿಯಿಂದ ಅರಸನ ಜೊತೆ ಔತಣಕ್ಕೆ ಹೋಗಬಹುದು,” ಎಂದು ಸಲಹೆ ನೀಡಿದರು. ಅದು ಅವನಿಗೆ ಸಮರ್ಪಕವಾಗಿ ಕಂಡುಬರಲು ಹಾಮಾನನು ಅದರಂತೆಯೇ ಗಲ್ಲುಮರವನ್ನು ಸಿದ್ಧಮಾಡಿಸಿದನು.</verse>
			</chapter>
			<chapter number="6">
				<verse number="1">ಆ ರಾತ್ರಿ ಅರಸನಿಗೆ ನಿದ್ದೆಯೇ ಬರಲಿಲ್ಲ. ಆದ್ದರಿಂದ, ಸ್ಮರಿಸತಕ್ಕ ಪೂರ್ವ ಘಟನೆಗಳನ್ನು ಬರೆದಿಟ್ಟಿದ್ದ ಗ್ರಂಥವನ್ನು ತರಿಸಿ, ಅದನ್ನು ಪಾರಾಯಣ ಮಾಡಿಸುತ್ತಿದ್ದಾಗ,</verse>
				<verse number="2">ಅರಸನನ್ನು ಕೊಲ್ಲಲು ದ್ವಾರಪಾಲಕರಾದ ಬಿಗೆತಾನ್, ತೆರೆಷ್ ಎಂಬಿಬ್ಬರು ರಾಜಕಂಚುಕಿಗಳು ಪಿತೂರಿ ನಡೆಸಿದ್ದ ಪ್ರಕರಣ ಹಾಗೂ ಅದು ಮೊರ್ದೆಕೈಯ ಮುಖಾಂತರ ತಿಳಿದುಬಂದ ಲಿಖಿತ ವಿಷಯ ಅದರಲ್ಲಿ ಸಿಕ್ಕಿದವು.</verse>
				<verse number="3">ಆಗ ಅರಸನು, “ಈ ಸತ್ಕಾರ್ಯಕ್ಕಾಗಿ ಮೊರ್ದೆಕೈಯನಿಗೆ ಯಾವ ಸನ್ಮಾನ ಮಾಡಲಾಯಿತೆಂದು ವಿಚಾರಿಸಿದಾಗ, ಅವನ ಆಸ್ಥಾನಸೇವಕರು ಯಾವುದೂ ಇಲ್ಲವೆಂದು ಉತ್ತರವಿತ್ತರು.</verse>
				<verse number="4">ಕೂಡಲೆ ಅರಸನು, “ಯಾರಲ್ಲಿ, ಅಂಗಳದಲ್ಲಿ?” ಎಂದು ವಿಚಾರಿಸಿದನು. ಅಷ್ಟರಲ್ಲಿ, ತಾನೇ ಸಿದ್ಧಮಾಡಿಸಿದ್ದ ಗಲ್ಲುಮರಕ್ಕೆ ಮೊರ್ದೆಕೈಯನ್ನು ನೇಣುಹಾಕಿಸಲು ಅರಸನ ಅಪ್ಪಣೆಯನ್ನು ಪಡೆಯುವುದಕ್ಕೋಸ್ಕರ ಹಾಮಾನನು ಆಗತಾನೆ ಅರಮನೆಯ ಹೊರಗಣ ಅಂಗಳಕ್ಕೆ ಬಂದಿದ್ದನು.</verse>
				<verse number="5">ಆದ್ದರಿಂದ ರಾಜಸೇವಕರು, “ಇಗೋ, ಹಾಮಾನರು ಅಂಗಳದಲ್ಲಿ ನಿಂತುಕೊಂಡಿದ್ದಾರೆ,” ಎಂದರು. ಅರಸನು, “ಅವನು ಒಳಗೆ ಬರಲಿ,” ಎಂದು ಅಪ್ಪಣೆಮಾಡಿದನು.</verse>
				<verse number="6">ಹಾಮಾನನು ಒಳಗೆ ಬಂದಾಗ ಅರಸನು ಅವನಿಗೆ, “ಅರಸನು ಒಬ್ಬ ವ್ಯಕ್ತಿಯನ್ನು ಗೌರವಿಸಲು ಬಯಸಿದರೆ ಅಂಥ ವ್ಯಕ್ತಿಗೆ ನೀಡಬಹುದಾದ ತಕ್ಕ ಸನ್ಮಾನ ಯಾವುದು?” ಎಂದು ವಿಚಾರಿಸಲು,</verse>
				<verse number="7">ಹಾಮಾನನು ತನ್ನನ್ನಲ್ಲದೆ ಬೇರೆ ಯಾರನ್ನು ಸನ್ಮಾನಿಸಲು ಅರಸನು ಬಯಸಿಯಾನು ಎಂದು ತನ್ನಲ್ಲೆ ಅಂದುಕೊಂಡು ಅವನಿಗೆ ಪ್ರತ್ಯುತ್ತರವಾಗಿ, “ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಗೆ ಈ ರೀತಿ ಮಾಡಬೇಕು:</verse>
				<verse number="8">ಅರಸನು ಧರಿಸಿಕೊಳ್ಳುವ ರಾಜವಸ್ತ್ರಗಳನ್ನೂ ಸವಾರಿಮಾಡುವ ಪಟ್ಟದ ಕುದುರೆಯನ್ನೂ ತರಿಸಬೇಕು.</verse>
				<verse number="9">ಆ ವಸ್ತ್ರಗಳನ್ನೂ ಕುದುರೆಯನ್ನೂ ಅರಸನ ಪ್ರಧಾನ ಸವಾರರಲ್ಲೊಬ್ಬನ ವಶಕ್ಕೆ ಕೊಡಬೇಕು; ಇವನು, ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಗೆ ರಾಜವಸ್ತ್ರಗಳನ್ನು ತೊಡಿಸಿ, ಕುದುರೆಯ ಮೇಲೆ ಕೂರಿಸಿ ಪಟ್ಟಣದ ರಾಜಬೀದಿಗಳಲ್ಲಿ ಮೆರವಣಿಗೆಮಾಡಿಸುತ್ತಾ, ಅವನ ಮುಂದೆ ‘ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಯನ್ನು ಗೌರವಿಸುವ ರೀತಿ ಇದೇ’ ಎಂದು ಪ್ರಕಟಿಸಬೇಕು,” ಎಂದನು.</verse>
				<verse number="10">ಕೂಡಲೆ ಅರಸನು ಹಾಮಾನನಿಗೆ, “ನೀನು ಹೇಳಿದ ಪ್ರಕಾರವೇ ಬೇಗನೆ ಹೋಗಿ ರಾಜವಸ್ತ್ರಗಳನ್ನೂ ಪಟ್ಟದ ಕುದುರೆಯನ್ನೂ ತೆಗೆದುಕೊಂಡು ಅರಮನೆಯ ಬಾಗಿಲಲ್ಲಿ ಕುಳಿತಿರುವ ಮೊರ್ದೆಕೈ ಎಂಬ ಯೆಹೂದ್ಯನಿಗೆ ಹಾಗೆಯೇ ಮಾಡು. ನೀನು ಸಲಹೆ ಮಾಡಿದವುಗಳಲ್ಲಿ ಒಂದನ್ನೂ ಬಿಡದೆ, ಚಾಚೂತಪ್ಪದೆ ನೆರವೇರಿಸು,” ಎಂದು ಅಪ್ಪಣೆಮಾಡಿದನು.</verse>
				<verse number="11">ಬೇರೆ ವಿಧಿಯಿಲ್ಲದೆ ಹಾಮಾನನು ಹೊರಟು ಆ ವಸ್ತ್ರಗಳನ್ನು, ಕುದುರೆಯನ್ನು ತೆಗೆದುಕೊಂಡು ಮೊರ್ದೆಕೈಗೆ ಆ ವಸ್ತ್ರಗಳನ್ನು ತೊಡಿಸಿ, ಅವನನ್ನು ಕುದುರೆಯ ಮೇಲೆ ಕೂರಿಸಿ ಪಟ್ಟಣದ ರಾಜಬೀದಿಗಳಲ್ಲಿ ಮೆರವಣಿಗೆ ಮಾಡಿಸಿ ಅವನ ಮುಂದೆ, “ಅರಸನು ಸನ್ಮಾನಿಸಬೇಕೆಂದಿರುವ ವ್ಯಕ್ತಿಯನ್ನು ಗೌರವಿಸುವ ರೀತಿ ಇದೇ,” ಎಂದು ಪ್ರಕಟಪಡಿಸಿದನು.</verse>
				<verse number="12">ಮೊರ್ದೆಕೈ, ಪುನಃ ಅರಮನೆಯ ಬಾಗಿಲಿಗೆ ಬಂದನು. ಹಾಮಾನನಾದರೋ ವ್ಯಸನಕ್ರಾಂತನಾಗಿ ಮುಖ ಮುಚ್ಚಿಕೊಂಡು ಶೀಘ್ರವಾಗಿ ಮನೆಗೆ ಧಾವಿಸಿದನು.</verse>
				<verse number="13">ತನ್ನ ಪತ್ನಿ ಜೆರೆಷಳಿಗೂ ಎಲ್ಲಾ ಆಪ್ತರಿಗೂ ತನಗೆ ಸಂಭವಿಸಿದುದನ್ನೆಲ್ಲಾ ವರದಿಮಾಡಿದನು. ಆಗ ಅವನ ಪಂಡಿತರೂ ಪತ್ನಿಯೂ ಅವನಿಗೆ, “ಯಾವನಿಂದ ನಿಮ್ಮ ಪತನವು ಪ್ರಾರಂಭವಾಯಿತೋ ಆ ವ್ಯಕ್ತಿ ಒಂದು ವೇಳೆ ಯೆಹೂದ್ಯನಾಗಿದ್ದರೆ, ನೀವು ಅವನನ್ನೆಂದಿಗೂ ಜಯಿಸಲಾರಿರಿ. ಅವನ ಮುಂದೆ ಬಿದ್ದು ಹಾಳಾಗುವಿರಿ,” ಎಂದು ಎಚ್ಚರವಿತ್ತರು.</verse>
				<verse number="14">ಅವರು ಇನ್ನೂ ಮಾತಾಡುತ್ತಿರುವಾಗಲೇ ರಾಜಕಂಚುಕಿಗಳು ಬಂದು, ಎಸ್ತೇರಳು ಏರ್ಪಡಿಸಿರುವ ಔತಣಕ್ಕೆ ಬೇಗನೆ ಹೊರಟುಬರಬೇಕೆಂದು ಹಾಮಾನನನ್ನು ಕರೆದರು.</verse>
			</chapter>
			<chapter number="7">
				<verse number="1">ಅರಸನು ಹಾಮಾನನೊಡನೆ ಔತಣಕ್ಕಾಗಿ ಎಸ್ತೇರಳ ಮನೆಗೆ ಬಂದನು.</verse>
				<verse number="2">ಅರಸನು ಈ ಎರಡನೆಯ ದಿನದಲ್ಲೂ ದ್ರಾಕ್ಷಾರಸ ಪಾನಮಾಡುತ್ತಿರುವಾಗ ಎಸ್ತೇರಳಿಗೆ, “ಎಸ್ತೇರ್ ರಾಣಿಯೇ, ನಿನ್ನ ವಿಜ್ಞಾಪನೆ ಯಾವುದು ಹೇಳು; ಅದನ್ನು ನಾನು ನೆರವೇರಿಸುವೆನು. ನನ್ನ ರಾಜ್ಯದ ಅರ್ಧಭಾಗವನ್ನು ಕೇಳಿದರೂ ಸರಿ, ನಾನದನ್ನು ನಿನಗೆ ಕೊಡುವೆನು,” ಎನ್ನಲು</verse>
				<verse number="3">ಎಸ್ತೇರಳು ಪ್ರತ್ಯುತ್ತರವಾಗಿ, “ಅರಸರು ನನ್ನ ಮೇಲೆ ಕೃಪಾಕಟಾಕ್ಷವನ್ನಿಟ್ಟು ಈಡೇರಿಸುವುದಾದರೆ ನನ್ನ ವಿಜ್ಞಾಪನೆಯನ್ನು, ಪ್ರಾರ್ಥನೆಯನ್ನು ಆಲಿಸಿ, ನನ್ನ ಪ್ರಾಣವನ್ನು ಹಾಗು ನನ್ನ ಜನರ ಪ್ರಾಣವನ್ನು ಉಳಿಸಬೇಕು.</verse>
				<verse number="4">ಜನರು ನಮ್ಮನ್ನು ಕೊಂದು, ಸಂಹರಿಸಿ, ನಿರ್ನಾಮಗೊಳಿಸುವ ಹಾಗೆ ನಮ್ಮನ್ನು ಮಾರಲಾಯಿತು. ಬರೀ ಮಾರಾಟವಾಗಿದ್ದರೆ ಈ ದುರಂತ ಪರಿಸ್ಥಿತಿಯ ವಿಷಯದಲ್ಲಿ ಅರಸರಿಗೆ ತೊಂದರೆಪಡಿಸುವುದು ಸರಿಯಲ್ಲವೆಂದು ಸುಮ್ಮನಿದ್ದುಬಿಡುತ್ತಿದ್ದೆ,” ಎಂದಳು.</verse>
				<verse number="5">ಆಗ ಅರಸನು, “ಇಂಥ ದುಷ್ಕೃತ್ಯವನ್ನು ಎಸಗಲು ಸಂಚು ನಡೆಸಿದ ಕೇಡಿಗನು ಯಾರು? ಎಲ್ಲಿದ್ದಾನೆ ಅವನು?” ಎಂದು ಕೇಳಲು</verse>
				<verse number="6">ಆಕೆ, “ನಮ್ಮ ವೈರಿಯೂ ಶತ್ರುವೂ ಬೇರಾರೂ ಅಲ್ಲ; ಇಗೋ, ಈ ಹಾಮಾನನೇ ಆ ದುಷ್ಟ,” ಎಂದಳು. ಇದನ್ನು ಕೇಳಿದೊಡನೆ ಹಾಮಾನನು ಅರಸನ ಮತ್ತು ರಾಣಿಯ ಮುಂದೆ ಭಯದಿಂದ ನಡುಗಿದನು.</verse>
				<verse number="7">ರೌದ್ರಾವೇಶಗೊಂಡ ಅರಸ ದ್ರಾಕ್ಷಾರಸ ಪಾನಮಾಡುವುದನ್ನು ಬಿಟ್ಟೆದ್ದು, ತೋಟಕ್ಕೆ ಹೋದನು. ಅರಸನಿಂದ ತನಗೆ ಶಿಕ್ಷೆ ನಿಶ್ಚಿತವೆಂದರಿತ ಹಾಮಾನನು ಎಸ್ತೇರ್ ರಾಣಿಯ ಮುಂದೆ ಪ್ರಾಣಭಿಕ್ಷೆಗಾಗಿ ಅಂಗಲಾಚಿ ಬೇಡುತ್ತಾ ನಿಂತನು.</verse>
				<verse number="8">ಅರಸನು ಅರಮನೆಯ ತೋಟದಿಂದ, ತಾನು ದ್ರಾಕ್ಷಾರಸ ಸೇವಿಸುತ್ತಿದ್ದ ಕೊಠಡಿಗೆ ಹಿಂದಿರುಗಿಬಂದಾಗ ಎಸ್ತೇರಳು ಒರಗಿಕೊಂಡಿದ್ದ ಸುಖಾಸನದತ್ತ ಹಾಮಾನನು ಬಾಗಿರುವುದನ್ನು ಕಂಡು, “ಇದೇನು? ಇವನು ನನ್ನ ಮುಂದೆಯೇ ನನ್ನ ಅರಮನೆಯಲ್ಲಿಯೇ ರಾಣಿಯ ಮೇಲೆ ಬಲಾತ್ಕಾರ ಮಾಡಲು ಹೊರಟಿರುವನೆ?” ಎಂದನು. ಅರಸನ ಬಾಯಿಂದ ಈ ಮಾತುಗಳು ಹೊರಬಿದ್ದದ್ದೇ ತಡ ಸೇವಕರು ಹಾಮಾನನ ಮುಖದ ಮೇಲೆ ಮುಸುಕನ್ನು ಎಳೆದರು.</verse>
				<verse number="9">ಇದಲ್ಲದೆ, ಅರಸನ ಸೀಮೆಯಲ್ಲಿದ್ದ ಕಂಚುಕಿಗಳಲ್ಲೊಬ್ಬನಾದ ಹರ್ಬೋನನು, “ಇಗೋ, ಅರಸನ ಪ್ರಾಣವನ್ನು ರಕ್ಷಿಸಲು ಸಮಾಚಾರವನ್ನು ತಿಳಿಸಿದ ಮೊರ್ದಕೈಯನ್ನು ಕೊಲ್ಲುವುದಕ್ಕಾಗಿ ಹಾಮಾನನು ಸಿದ್ಧಮಾಡಿಸಿದ ಇಪ್ಪತ್ತೆರಡು ಮೀಟರ್ ಎತ್ತರದ ನೇಣುಗಂಬವಿದೆಯಲ್ಲ,” ಎನ್ನಲು ಅರಸನು, “ಇವನನ್ನು ಅದಕ್ಕೆ ನೇತುಹಾಕಿರಿ,” ಎಂದು ಆಜ್ಞಾಪಿಸಿದನು.</verse>
				<verse number="10">ಮೊರ್ದೆಕೈಗೋಸ್ಕರ ಹಾಮಾನನು ಸಿದ್ಧಮಾಡಿದ್ದ ಅದೇ ಗಲ್ಲಿಗೆ ಅವನನ್ನು ಏರಿಸಿದರು. ಅರಸನ ಕೋಪವು ಶಾಂತವಾಯಿತು.</verse>
			</chapter>
			<chapter number="8">
				<verse number="1">ಆ ದಿನದಂದೇ ಅರಸ ಅಹಷ್ವೇರೋಷನು, ಯೆಹೂದ್ಯರ ಶತ್ರುವಾದ ಹಾಮಾನನು ವಾಸವಾಗಿದ್ದ ನಿವಾಸವನ್ನು ರಾಣಿ ಎಸ್ತೇರಳಿಗೆ ಕೊಟ್ಟನು. ಆಕೆ ತನಗೂ ಮೊರ್ದೆಕೈಗೂ ಇದ್ದ ನಿಜ ಸಂಬಂಧವನ್ನು ಅರಸನಿಗೆ ತಿಳಿಸಿದಳು.</verse>
				<verse number="2">ಆಗ ಅರಸನು ಮೊರ್ದೆಕೈಯನ್ನು ಗೌರವದಿಂದ ಸ್ವಾಗತಿಸಿ ಹಾಮಾನನಿಂದ ತೆಗೆಸಿದ ಮುದ್ರೆ ಉಂಗುರವನ್ನು ಅವನಿಗೆ ತೊಡಿಸಿದನು. ಎಸ್ತೇರಳು ಹಾಮಾನನ ಮನೆಯ ಆಡಳಿತವನ್ನು ಮೊರ್ದೆಕೈಯನಿಗೆ ವಹಿಸಿದಳು.</verse>
				<verse number="3">ಎಸ್ತೇರಳು ಪುನಃ ಅರಸನ ಮುಂದೆ ಹೋಗಿ ಅವನ ಪಾದಗಳಿಗೆರಗಿ, ಅಳುತ್ತಾ, ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಹೂಡಿದ್ದ ದುಷ್ಟ ಯೋಜನೆಯನ್ನು ರದ್ದುಪಡಿಸುವಂತೆ ವಿಜ್ಞಾಪಿಸಿದಳು.</verse>
				<verse number="4">ಅರಸನು ತನ್ನ ಸ್ವರ್ಣದಂಡವನ್ನು ಆಕೆಯ ಕಡೆಗೆ ಚಾಚಲು, ಆಕೆ ಅವನ ಮುಂದೆ ಎದ್ದು ನಿಂತು,</verse>
				<verse number="5">“ತಾವು ನನ್ನ ಮೇಲೆ ಕೃಪಾಕಟಾಕ್ಷವಿರಿಸಿ, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಸಮಂಜಸವಾದುದೆಂದು ಎಣಿಸಿ, ಅದಕ್ಕೆ ಸಮ್ಮತಿಸುವುದಾದರೆ, ತಮ್ಮ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ಸಲುವಾಗಿ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಬರೆಸಿದ ಪತ್ರಗಳನ್ನು ರದ್ದುಗೊಳಿಸಲು ಆಜ್ಞೆ ಹೊರಡಿಸಬೇಕು.</verse>
				<verse number="6">ನನ್ನ ಜನರಿಗೆ ಕೇಡು ಸಂಭವಿಸುವುದನ್ನು ಕಣ್ಣಾರೆ ಕಂಡು ನಾನು ಹೇಗೆ ತಾನೆ ಸಹಿಸಲಿ? ನನ್ನ ಕುಲನಾಶವನ್ನು ಕಂಡು ಸುಮ್ಮನಿರುವುದಾದರೂ ಹೇಗೆ?” ಎಂದು ಬಿನ್ನವಿಸಿದಳು.</verse>
				<verse number="7">ಆಗ ಅರಸನು, ರಾಣಿ ಎಸ್ತೇರಳಿಗೂ ಯೆಹೂದ್ಯನಾದ ಮೊರ್ದೆಕೈಗೂ, “ಹಾಮಾನನು ಯೆಹೂದ್ಯರ ವಿರುದ್ಧ ಕೈಯೆತ್ತಿದ್ದರಿಂದ ಅವನನ್ನು ಗಲ್ಲಿಗೇರಿಸಿ ಅವನ ಮನೆಯನ್ನು ಎಸ್ತೇರಳಿಗೆ ದಾನ ಮಾಡಿದೆನಲ್ಲವೆ?</verse>
				<verse number="8">ಅರಸನ ಹೆಸರಿನಲ್ಲಿ ಬರೆಯಲಾದ ಹಾಗು ರಾಜಮುದ್ರೆಯನ್ನು ಹೊಂದಿರುವ ಲೇಖನವನ್ನು ಯಾರೂ ರದ್ದುಮಾಡಲಾಗದು. ಆದ್ದರಿಂದ ಯೆಹೂದ್ಯರ ವಿಷಯದಲ್ಲಿ ನಿಮಗೆ ಸರಿತೋರಿದಂತೆ ಅರಸನ ಹೆಸರಿನಲ್ಲಿ ನೀವೂ ಪತ್ರ ಬರೆಯಿಸಿ, ಅದಕ್ಕೆ ರಾಜಮುದ್ರೆಯನ್ನು ಹಾಕಿರಿ,” ಎಂದು ಹೇಳಿದನು.</verse>
				<verse number="9">ಆಗ ರಾಜಲೇಖಕರನ್ನು ಕರೆಯಿಸಲಾಯಿತು. ಇವರು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೇ ದಿನದಲ್ಲಿ ಬಂದು ಮೊರ್ದೆಕೈಯ ಆಜ್ಞಾನುಸಾರ, ಯೆಹೂದ್ಯರಿಗೂ ಭಾರತ ಮೊದಲ್ಗೊಂಡು ಕೂಷಿನವರೆಗೂ ಹರಡಿರುವ ನೂರಿಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ ದೇಶಾಧಿಪತಿಗಳಿಗೂ ಅಧಿಕಾರಿಗಳಿಗೂ, ಆಯಾ ಸಂಸ್ಥಾನಗಳ ಲಿಪಿಯಲ್ಲೂ ಆಯಾ ಜನಾಂಗಗಳ ಭಾಷೆಯಲ್ಲೂ ಪತ್ರಗಳನ್ನು ಬರೆದರು.</verse>
				<verse number="10">ಅರಸನ ಹೆಸರಿನಲ್ಲಿ ಬರೆಯಲಾದ ಈ ಪತ್ರಗಳಿಗೆ ಮೊರ್ದೆಕೈ ರಾಜಮುದ್ರೆಯನ್ನು ಒತ್ತಿ, ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದ ಸವಾರಿ ಕುದುರೆಗಳನ್ನೇರಿ ಹೊರಟ ಅಂಚೆಯವರ ಮುಖಾಂತರ ಕಳುಹಿಸಿದನು.</verse>
				<verse number="11">ಆ ಪತ್ರಗಳಲ್ಲಿ ಅರಸನ ರಾಜಾಜ್ಞೆ ಹೀಗೆಂದು ಬರೆಯಲಾಗಿತ್ತು: ‘ಅರಸ ಅಹಷ್ವೇರೋಷನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಎಲ್ಲಾ ಯೆಹೂದ್ಯರು ಒಂದೇ ದಿನದಲ್ಲಿ</verse>
				<verse number="12">ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಒಟ್ಟಾಗಿ ಸೇರಿ, ತಮ್ಮ ಪ್ರಾಣರಕ್ಷಣೆಗಾಗಿ ದಂಗೆಯೆದ್ದು, ತಮಗೆ ವಿರೋಧವಾಗಿ ಆಯುಧಗಳೊಡನೆ ನೆರೆದುಬರುವ ಎಲ್ಲಾ ಜನಾಂಗಗಳವರನ್ನೂ ಸಂಸ್ಥಾನಗಳವರನ್ನೂ ಮಕ್ಕಳು ಮಹಿಳೆಯರೆನ್ನದೆ ಎಲ್ಲರನ್ನೂ, ಕೊಂದು ಸಂಹರಿಸಿ,</verse>
				<verse number="13">ನಿರ್ನಾಮಗೊಳಿಸಿ ಅವರ ಆಸ್ತಿಪಾಸ್ತಿಯನ್ನೆಲ್ಲಾ ಸೂರೆಮಾಡಬೇಕು; ಈ ಪತ್ರದ ಪ್ರತಿಯನ್ನು ಪ್ರತಿಯೊಂದು ಸಂಸ್ಥಾನದಲ್ಲಿ ರಾಜಾಜ್ಞೆಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಬೇಕು. ಆ ದಿನಗಳಲ್ಲಿ ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಸನ್ನದ್ಧರಾಗಿರಬೇಕು.’</verse>
				<verse number="14">ಅರಸನ ಈ ರಾಜಾಜ್ಞೆ ಶೂಷನ್ ನಗರದಲ್ಲಿ ಪ್ರಕಟವಾದ ಕೂಡಲೆ ಅದರಿಂದ ಪ್ರೇರಿತರಾದ ಅಂಚೆಯವರು ಅರಮನೆಯ ಸವಾರಿ ಕುದುರೆಗಳನ್ನೇರಿ ಅತಿಶೀಘ್ರವಾಗಿ ಧಾವಿಸಿದರು.</verse>
				<verse number="15">ಮೊರ್ದೆಕೈಯಾದರೋ ನೀಲ ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿ, ಬಂಗಾರದ ದೊಡ್ಡ ಪಟ್ಟಿಯನ್ನು ಹಣೆಗೆ ಕಟ್ಟಿಕೊಂಡು, ರಕ್ತವರ್ಣದ ನಾರಿನ ಶಾಲನ್ನು ಹೊದ್ದು ರಾಜಸನ್ನಿಧಿಯಿಂದ ಹೊರಟನು. ಶೂಷನ್ ನಗರದಲ್ಲಿ ಹರ್ಷೋದ್ಗಾರ ಮೊಳಗಿತು.</verse>
				<verse number="16">ಅಲ್ಲಿನ ಯೆಹೂದ್ಯರು ಹರ್ಷಾನಂದ ಪ್ರಭಾವಗಳಿಂದ ಪುಳಕಿತರಾದರು.</verse>
				<verse number="17">ರಾಜನಿರ್ಣಯ ಶಾಸನಗಳು ಪ್ರಕಟವಾದ ಸಂಸ್ಥಾನಗಳಲ್ಲೂ ನಗರಗಳಲ್ಲೂ ವಾಸಿಸುತ್ತಿದ್ದ ಯೆಹೂದ್ಯರೆಲ್ಲರಿಗೆ ಶುಭದಿನ ಉದಯವಾಯಿತು. ಅವರು ಅದನ್ನು ಸಂತೋಷದ ಹಾಗೂ ಸಂಭ್ರಮದ ದಿನವನ್ನಾಗಿ ಆಚರಿಸಿದರು. ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.</verse>
			</chapter>
			<chapter number="9">
				<verse number="1">ಅರಸನ ಆಜ್ಞೆಯನ್ನು, ನಿರ್ಣಯವನ್ನು ನೆರವೇರಿಸತಕ್ಕ ದಿನವು ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನವು ಬಂದಿತು. ಆ ದಿನದಲ್ಲಿ ಯೆಹೂದ್ಯರನ್ನು ತಾವೇ ಸ್ವಾಧೀನಪಡಿಸಿಕೊಳ್ಳಬಹುದೆಂದು ಅವರ ವೈರಿಗಳು ನಿರೀಕ್ಷಿಸಿದ್ದರು. ಆದರೆ ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮ ವೈರಿಗಳನ್ನು ಸ್ವಾಧೀನಮಾಡಿಕೊಂಡರು.</verse>
				<verse number="2">ಆದುದರಿಂದ ಅರಸ ಅಹಷ್ವೇರೋಷನ ಸಮಸ್ತ ಸಂಸ್ಥಾನಗಳ ಪ್ರತಿಯೊಂದು ನಗರದಲ್ಲಿದ್ದ ಯೆಹೂದ್ಯರು ತಮಗೆ ಕೇಡು ಬಗೆದವರಿಗೆ ವಿರುದ್ಧವಾಗಿ ಕೈಯೆತ್ತಲು ಒಟ್ಟಾಗಿ ಸೇರಿದರು. ಎಲ್ಲರಿಗೂ ಅವರ ಭಯ ಇದ್ದುದರಿಂದ ಯಾರೂ ಅವರ ಮುಂದೆ ನಿಲ್ಲಲಾಗಲಿಲ್ಲ.</verse>
				<verse number="3">ಇದಲ್ಲದೆ ಅರಮನೆಯಲ್ಲಿ ಮೊರ್ದೆಕೈಯ ಅಧಿಕಾರ ಪ್ರಬಲವಾಗುತ್ತಾ ಬಂದುದರಿಂದ ಅವನ ಕೀರ್ತಿ ಎಲ್ಲಾ ಸಂಸ್ಥಾನಗಳಲ್ಲಿಯೂ ಹಬ್ಬಿತ್ತು.</verse>
				<verse number="4">ಆದುದರಿಂದ ಸಕಲ ಸಂಸ್ಥಾನಾಧಿಕಾರಿಗಳೂ ಉಪರಾಜರೂ ದೇಶಾಧಿಪತಿಗಳೂ ಮತ್ತು ಇತರ ರಾಜಸೇವಕರೂ ಅವನಿಗೆ ಭಯಪಟ್ಟು ಯೆಹೂದ್ಯರಿಗೆ ನೆರವಾದರು.</verse>
				<verse number="5">ಹೀಗಾಗಿ ಯೆಹೂದ್ಯರು ತಮ್ಮ ವೈರಿಗಳನ್ನೆಲ್ಲಾ ಸೋಲಿಸಿ, ಕತ್ತಿಯಿಂದ ಇರಿದು ಕೊಂದು, ನಿರ್ನಾಮಗೊಳಿಸಿದರು. ತಮ್ಮನ್ನು ಹಗೆಮಾಡುತ್ತಿದ್ದ ಶತ್ರುಗಳಿಗೆ ತಮ್ಮ ಇಷ್ಟಾನುಸಾರ ಮಾಡಿದರು.</verse>
				<verse number="6">ಶೂಷನ್ ನಗರದಲ್ಲೇ ಐನೂರು ಮಂದಿ ಹತರಾದರು.</verse>
				<verse number="7">ಹತರಾದವರಲ್ಲಿ ಯೆಹೂದ್ಯರ ವೈರಿಯಾಗಿದ್ದ ಹಮ್ಮೆದಾತನ ಮಗ ಹಾಮಾನನ ಹತ್ತುಮಂದಿ ಮಕ್ಕಳೂ ಇದ್ದರು. ಅವರ ಹೆಸರುಗಳು ಯಾವುವೆಂದರೆ - ಪರ್ಷಂದಾತ, ದಲ್ಫೋನ್, ಅಸ್ಪಾತ, ಪೋರಾತ, ಅದಲ್ಯ, ಅರೀದಾತ, ಪರ್ಮಷ್ಟ, ಅರೀಸೈ, ಅರಿದೈ, ವೈಜಾತ, ಇಷ್ಟುಮಂದಿಯನ್ನು ಕೊಂದರೂ ಯೆಹೂದ್ಯರು ಸುಲಿಗೆಗೆ ಕೈಹಾಕಲಿಲ್ಲ.</verse>
				<verse number="8"></verse>
				<verse number="9"></verse>
				<verse number="10"></verse>
				<verse number="11">ಆ ದಿನ ಶೂಷನ್ ನಗರದಲ್ಲಿ ಹತರಾದವರ ಸಂಖ್ಯೆ ಅರಸನಿಗೆ ತಿಳಿದುಬಂದಾಗ ಅವನು ಎಸ್ತೇರ್ ರಾಣಿಗೆ,</verse>
				<verse number="12">“ಯೆಹೂದ್ಯರು ಶೂಷನ್ ನಗರದಲ್ಲೇ ಐನೂರು ಮಂದಿಯನ್ನು, ಹಾಮಾನನ ಹತ್ತು ಮಕ್ಕಳನ್ನೂ ಸಂಹರಿಸಿಬಿಟ್ಟಿದ್ದಾರೆ. ಉಳಿದ ರಾಜಸಂಸ್ಥಾನಗಳಲ್ಲಿ ಇನ್ನೆಷ್ಟುಮಂದಿಯನ್ನು ಹತಮಾಡಿರಬಹುದೋ! ನಿನ್ನ ವಿಜ್ಞಾಪನೆ ಯಾವುದಿದ್ದರೂ ನೆರವೇರಿಸುವೆನು ಕೇಳು, ನೀನು ಏನು ಕೇಳಿದರೂ ಕೊಡುವೆನು ಹೇಳು,” ಎಂದನು.</verse>
				<verse number="13">ಪ್ರತ್ಯುತ್ತರವಾಗಿ ಎಸ್ತೇರಳು ಅರಸನಿಗೆ, “ಇಂದಿನಂತೆ ನಾಳೆಯೂ ರಾಜಾಜ್ಞೆ ಜಾರಿಯಲ್ಲಿರಬೇಕು ಹಾಗು ಹಾಮಾನನ ಹತ್ತು ಮಕ್ಕಳ ಶವಗಳನ್ನು ಗಲ್ಲಿಗೇರಿಸುವಂತೆ ಅಪ್ಪಣೆಯಾಗಬೇಕು,” ಎಂದು ಬೇಡಿಕೊಂಡಳು.</verse>
				<verse number="14">ಅರಸನು ಎಸ್ತೇರಳಿಗೆ ತನ್ನ ಇಚ್ಛೆಯಂತೆ ಮಾಡಲು ಅಪ್ಪಣೆಕೊಟ್ಟನು. ಕೂಡಲೆ ಇದಕ್ಕೆ ಸಂಬಂಧಪಟ್ಟ ರಾಜಾಜ್ಞೆ ಶೂಷನ್ ನಗರದಲ್ಲಿ ಪ್ರಕಟವಾಯಿತು. ಹಾಮಾನನ ಹತ್ತುಮಂದಿ ಮಕ್ಕಳ ಶವಗಳನ್ನು ಗಲ್ಲಿಗೇರಿಸಲಾಯಿತು.</verse>
				<verse number="15">ಶೂಷನಿನ ಯೆಹೂದ್ಯರು ಫಾಲ್ಗುಣಮಾಸದ ಹದಿನಾಲ್ಕನೆಯ ದಿನದಂದೂ ಒಟ್ಟಾಗಿ ಸೇರಿ ಮುನ್ನೂರು ಮಂದಿಯನ್ನು ಕೊಂದುಹಾಕಿದರು. ಆದರೆ ಸುಲಿಗೆಗೆ ಕೈಹಾಕಲಿಲ್ಲ.</verse>
				<verse number="16">ಹಾಗೆಯೆ ಇತರ ರಾಜಸಂಸ್ಥಾನಗಳಲ್ಲೂ ಯೆಹೂದ್ಯರು ತಮ್ಮ ವಿರೋಧಿಗಳ ಕಾಟವನ್ನು ನಿಲ್ಲಿಸಿ, ತಮ್ಮ ಪ್ರಾಣರಕ್ಷಣೆಗಾಗಿ ಒಟ್ಟಾಗಿ ಸೇರಿ, ತಮ್ಮ ವೈರಿಗಳಲ್ಲಿ ಎಪ್ಪತ್ತೈದು ಸಾವಿರಮಂದಿಯನ್ನು ಕೊಂದುಹಾಕಿದರು. ಆದರೆ, ಸುಲಿಗೆಗೆ ಕೈಹಾಕಲಿಲ್ಲ.</verse>
				<verse number="17">ಇದು ನಡೆದದ್ದು ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ. ಅವರು ಹದಿನಾಲ್ಕನೆಯ ದಿನದಂದು ವಿಶ್ರಮಿಸಿದರು. ಅಂದು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.</verse>
				<verse number="18">ಶೂಷನಿನ ಯೆಹೂದ್ಯರು ಹದಿಮೂರನೇ ಹಾಗೂ ಹದಿನಾಲ್ಕನೇ ದಿನ ಒಟ್ಟಾಗಿ ಸೇರಿಬಂದುದರಿಂದ, ಅವರು ಹದಿನೈದನೆಯ ದಿನದಲ್ಲಿ ವಿಶ್ರಮಿಸಿಕೊಂಡರು. ಅಂದು ಸಂಭ್ರಮದ ಉತ್ಸವದಿನವನ್ನಾಗಿ ಆಚರಿಸಿದರು.</verse>
				<verse number="19">ಈ ಕಾರಣದಿಂದಾಗಿ ಬಯಲುಪ್ರದೇಶದ ಗ್ರಾಮನಿವಾಸಿ ಯೆಹೂದ್ಯರು ಹದಿನಾಲ್ಕನೇ ದಿನವನ್ನು ಶುಭದಿನವೆಂತಲೂ ನಗರವಾಸಿ ಯೆಹೂದ್ಯರು ಹದಿನೈದನೆಯ ದಿನವನ್ನು ಶುಭದಿನವೆಂತಲೂ ಆಚರಿಸಿ, ಉತ್ಸವ ಭೋಜನಮಾಡಿ, ಒಬ್ಬರಿಗೊಬ್ಬರು ತಿಂಡಿತೀರ್ಥಗಳನ್ನು ವಿನಿಮಯಿಸಿಕೊಳ್ಳುತ್ತಾರೆ.</verse>
				<verse number="20">ಮೊರ್ದೆಕೈಯು ಅಹಷ್ವೇರೋಷನ ಸಂಸ್ಥಾನಗಳಲ್ಲಿ ವಾಸಿಸುತ್ತಿದ್ದ ಎಲ್ಲಾ ಯೆಹೂದ್ಯರಿಗೆ, ಸಮೀಪದಲ್ಲೂ ದೂರದಲ್ಲೂ ಇದ್ದವರು ಎಲ್ಲರಿಗೂ ಪತ್ರಗಳ ಮುಖಾಂತರ ಈ ಕೆಳಕಂಡ ಸಂಗತಿಗಳನ್ನು ತಿಳಿಯಪಡಿಸಿದನು:</verse>
				<verse number="21">‘ಪ್ರತಿವರ್ಷವೂ ಫಾಲ್ಗುಣಮಾಸದ ಹದಿನಾಲ್ಕನೆ ಮತ್ತು ಹದಿನೈದನೆಯ ದಿನಗಳನ್ನು ಹಬ್ಬದ ದಿನಗಳಾಗಿ ಆಚರಿಸುವುದು ಶಾಶ್ವತ ನಿಯಮ ಎಂದು ಭಾವಿಸಬೇಕು.</verse>
				<verse number="22">ಆ ದಿಗಳಲ್ಲಿ ಯೆಹೂದ್ಯರಿಗೆ ಶತ್ರುಗಳ ಕಾಟ ತಪ್ಪಿ ವಿಶ್ರಾಂತಿ ದೊರೆಯಿತು. ಆ ತಿಂಗಳಿನಲ್ಲಿ ಸಂಕಟವು ಪರಿಹಾರವಾಗಿ ಸಂತೋಷ ಪ್ರಾಪ್ತಿಯಾಯಿತು; ದುಃಖವು ಕಳೆದು ಸುಖಕಾಲ ಬಂದಿತು. ಆದ್ದರಿಂದ ಆ ದಿನಗಳಲ್ಲಿ ಹಬ್ಬದ ಭೋಜನಮಾಡಿ ಪರಸ್ಪರ ತಿಂಡಿತೀರ್ಥಗಳನ್ನು ವಿನಿಮಯಮಾಡಿಕೊಳ್ಳಬೇಕು. ಹಾಗೂ ಬಡಬಗ್ಗರಿಗೆ ದಾನಧರ್ಮ ಮಾಡಬೇಕು.</verse>
				<verse number="23">ಮೊರ್ದೆಕೈಯ ಪತ್ರದಲ್ಲಿ ನಿರೂಪಿತವಾಗಿದ್ದ ಪ್ರಕಾರವೇ ಯೆಹೂದ್ಯರು ಅನುಸರಿಸಿದರು. ಅಂದಿನ ವರ್ಷ ಆಚರಿಸಿದ ಹಬ್ಬವು ತಮ್ಮಲ್ಲಿ ವಾರ್ಷಿಕ ಉತ್ಸವವಾಗಿ ಊರ್ಜಿತಗೊಳ್ಳಬೇಕೆಂದು ತೀರ್ಮಾನಿಸಿಕೊಂಡರು.</verse>
				<verse number="24">ಯೆಹೂದ್ಯರೆಲ್ಲರ ಕಡುವೈರಿಯಾಗಿದ್ದ ಅಗಾಗನ ವಂಶದವನೂ ಹಮ್ಮೆದಾತನ ಮಗನೂ ಆದ ಹಾಮಾನನು ಯೆಹೂದ್ಯರನ್ನು ಸಂಹರಿಸಬೇಕೆಂದು ತೀರ್ಮಾನಿಸಿಕೊಂಡು ಅವರನ್ನು ಹಾಳುಮಾಡಲು, ನಿರ್ನಾಮಗೊಳಿಸಲು ಪೂರನ್ನು ಅಂದರೆ ಚೀಟನ್ನು ಹಾಕಿದ್ದನು.</verse>
				<verse number="25">ಈ ವಿಷಯ ಅರಸನ ಕಿವಿಗೆ ಬಿದ್ದಾಗ, ಅವನು, ‘ಹಾಮಾನನು ಯೆಹೂದ್ಯರ ವಿರುದ್ಧ ಯೋಚಿಸಿದ ಕೇಡು ಅವನ ತಲೆಯ ಮೇಲೆಯೇ ಬರಲಿ. ಅವನನ್ನು ಅವನ ಮಕ್ಕಳನ್ನೂ ಗಲ್ಲಿಗೇರಿಸಿರಿ,’ ಎಂದು ಅಪ್ಪಣೆಮಾಡಿದ್ದನು.</verse>
				<verse number="26">ಆ ‘ಪೂರ್’ ಎಂಬ ಪದದ ಆಧಾರದ ಮೇಲೆ ಆ ದಿನಗಳಿಗೆ ‘ಪೂರಿಮ್’ ಎಂಬ ಹೆಸರು ಆಯಿತು. ಅರಸನು ಪತ್ರದಲ್ಲಿ ಬರೆದ ಮಾತುಗಳನ್ನೂ, ಅವುಗಳ ಸಂಬಂಧವಾಗಿ ತಾವೇ ಸ್ವತಃ ಅನುಭವಿಸಿದ್ದನ್ನೂ, ತಮಗೆ ಸಂಭವಿಸಿದ್ದನ್ನೂ ಸ್ಮರಿಸಿಕೊಂಡು ಪ್ರತಿವರ್ಷವೂ ಆ ಎರಡು ದಿನಗಳನ್ನು,</verse>
				<verse number="27">ಅವುಗಳಿಗೆ ಸಂಬಂಧಪಟ್ಟ ಶಾಸನದ ಪ್ರಕಾರ, ನಿಯಮಿತ ಕಾಲದಲ್ಲಿ ಆಚರಿಸುವುದು ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಮೀರಕೂಡದ ಪದ್ಧತಿನಿಯಮಗಳಾಬೇಕು;</verse>
				<verse number="28">ಯುಗಯುಗಾಂತರಕ್ಕೂ ಎಲ್ಲಾ ಗೋತ್ರ, ಸಂಸ್ಥಾನ, ನಗರದವರು ಈ ದಿನಗಳನ್ನು ಸ್ಮರಿಸಿ ಆಚರಿಸಬೇಕು; ಈ ಪೂರಿಮ್ ಹಬ್ಬವು ಯೆಹೂದ್ಯರಲ್ಲಿ ಎಂದಿಗೂ ನಿಂತುಹೋಗಬಾರದು ಹಾಗೂ ಅದರ ಸ್ಮರಣೆ ಅವರ ಸಂತಾನದವರಲ್ಲಿ ಅಳಿದುಹೋಗಲೇಬಾರದು ಎಂದೂ ತೀರ್ಮಾನಿಸಿಕೊಂಡರು.</verse>
				<verse number="29">ಇದಲ್ಲದೆ ಅಬೀಹೈಲನ ಮಗಳಾದ ಎಸ್ತೇರ್ ರಾಣಿಯು ಪೂರಿಮ್ ಹಬ್ಬದ ಆಚರಣೆಗೆ ಸಂಬಂಧಪಟ್ಟ ಆ ಎರಡನೇ ಶಾಸನವನ್ನು ದೃಢಪಡಿಸುವುದಕ್ಕಾಗಿ ಮೊರ್ದೆಕೈಯ ಸಹಾಯವನ್ನು ಪಡೆದು ಅಧಿಕೃತ ಪತ್ರಗಳನ್ನು ಬರೆದಳು.</verse>
				<verse number="30">ಮೊರ್ದೆಕೈ, ಅಹಷ್ವೇರೋಷನ ರಾಜ್ಯದ ನೂರಿಪ್ಪತ್ತೇಳು ಸಂಸ್ಥಾನಗಳಲ್ಲಿ ವಾಸಿಸುತ್ತಿದ್ದ ಯೆಹೂದ್ಯರೆಲ್ಲರಿಗೂ ಆ ಪತ್ರಗಳನ್ನು ಕಳುಹಿಸಿದನು.</verse>
				<verse number="31">ದಯೆ ಹಾಗೂ ಸತ್ಯತೆಯ ಮಾತುಗಳಿಂದ ತುಂಬಿದ್ದ ಆ ಪತ್ರಗಳಲ್ಲಿ ಎಸ್ತೇರಳು, “ಯೆಹೂದ್ಯರು ತಾವೂ ತಮ್ಮ ಸಂತತಿಯವರೆಲ್ಲರೂ ಉಪವಾಸ, ಪ್ರಲಾಪದಿನಗಳನ್ನು ಪ್ರತಿವರ್ಷ ತಪ್ಪದೆ ಆಚರಿಸಬೇಕು; ತಾವೇ ಗೊತ್ತುಮಾಡಿಕೊಂಡ ಪ್ರಕಾರ ಈ ಪೂರಿಮ್ ದಿನಗಳನ್ನು ತನ್ನ ಮತ್ತು ಯೆಹೂದ್ಯನಾದ ಮೊರ್ದಕೈಯ ಆದೇಶದಂತೆ ಪ್ರತಿವರ್ಷವೂ ನಿಯಮಿತ ಕಾಲದಲ್ಲಿ ತಪ್ಪದೆ ಆಚರಿಸಬೇಕು,” ಎಂದು ಬರೆದಿದ್ದಳು.</verse>
				<verse number="32">ಎಸ್ತೇರಳು ಹೊರಡಿಸಿದ ಈ ನಿರೂಪವು ಪೂರಿಮ್ ಹಬ್ಬದ ಆಚರಣೆಯನ್ನು ಸ್ಥಾಪಿಸಿತು ಮತ್ತು ಅದು ಗ್ರಂಥದಲ್ಲೂ ಲಿಖಿತವಾಯಿತು.</verse>
			</chapter>
			<chapter number="10">
				<verse number="1">ಅರಸ ಅಹಷ್ವೇರೋಷನು ತನ್ನ ರಾಜ್ಯಕ್ಕೆ ಸೇರಿದ ಎಲ್ಲಾ ದೇಶಗಳ ಮೇಲೂ ಸಮುದ್ರ-ದ್ವೀಪಗಳ ಮೇಲೂ ತೆರಿಗೆಯನ್ನು ವಿಧಿಸಿದನು.</verse>
				<verse number="2">ಅವನ ಶಕ್ತಿಸಾಮರ್ಥ್ಯದ ಸಾಹಸಕಾರ್ಯಗಳೆಲ್ಲವು ಹಾಗೂ ಅರಸನು ಮೊರ್ದೆಕೈಯನ್ನು ಅತ್ಯುನ್ನತ ಗೌರವಸ್ಥಾನಕ್ಕೆ ಏರಿಸಿದ್ದನ್ನು ಕುರಿತ ಪೂರ್ಣ ವಿವರವು ಮೇದ್ಯ ಮತ್ತು ಪರ್ಷಿಯ ದೇಶಗಳ ಅರಸರ ವೃತ್ತಾಂತಗ್ರಂಥದಲ್ಲಿ ಬರೆಯಲಾಗಿವೆ.</verse>
				<verse number="3">ಯೆಹೂದ್ಯನಾದ ಮೊರ್ದೆಕೈಯಾದರೋ ಅರಸ ಅಹಷ್ವೇರೋಷನಿಗೆ ದ್ವಿತೀಯಸ್ಥಾನದವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಬಂಧುಬಳಗದವರಲ್ಲಿ ಪ್ರೀತಿಪಾತ್ರನೂ ಸ್ವಜನರ ಹಿತಚಿಂತಕನೂ ಸ್ವಕುಲದವರೆಲ್ಲರಿಗೆ ಶಾಂತಿದೂತನೂ ಆಗಿದ್ದನು.</verse>
			</chapter>
		</book>
		<book number="18">
			<chapter number="1">
				<verse number="1">‘ಊಚ್’ ಎಂಬ ನಾಡಿನಲ್ಲಿ ‘ಯೋಬ’ ಎಂಬ ಒಬ್ಬ ವ್ಯಕ್ತಿಯಿದ್ದ. ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿ ಉಳ್ಳವನು, ಕೆಟ್ಟದ್ದನ್ನು ತೊರೆದು ಬಾಳಿದವನು.</verse>
				<verse number="2">ಆತನಿಗೆ ಏಳು ಗಂಡು, ಮೂರು ಹೆಣ್ಣು ಮಕ್ಕಳು ಇದ್ದರು.</verse>
				<verse number="3">ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಮತ್ತು ಐನೂರು ಕತ್ತೆಗಳು ಅವನಿಗಿದ್ದವು. ಜೊತೆಗೆ, ಆತನಿಗಿದ್ದ ಸೇವಕರೋ ಹಲವಾರು. ಮೂಡಣ ನಾಡಿನವರಲ್ಲಿ ಆತನೇ ದೊಡ್ಡ ಐಶ್ವರ್ಯವಂತ.</verse>
				<verse number="4">ಆತನ ಗಂಡು ಮಕ್ಕಳು ಒಂದೊಂದು ದಿನ ಒಬ್ಬೊಬ್ಬನ ಮನೆಯಲ್ಲಿ ಔತಣವನ್ನು ಏರ್ಪಡಿಸುತ್ತಿದ್ದರು. ತಮ್ಮ ಮೂವರು ತಂಗಿಯರನ್ನೂ ಆ ಭೋಜನಕ್ಕೆ ಆಹ್ವಾನಿಸುತ್ತಿದ್ದರು.</verse>
				<verse number="5">ಔತಣದ ಸರದಿ ತೀರಿದ ಬಳಿಕ, ಯೋಬನು ತನ್ನ ಮಕ್ಕಳು ಒಂದು ವೇಳೆ ಪಾಪಮಾಡಿ ಮನದಲ್ಲೇ ದೇವರನ್ನು ದೂಷಿಸಿರಬಹುದೆಂದುಕೊಂಡು, ಅವರನ್ನು ಕರೆಸಿ ಶುದ್ಧೀಕರಣ ಮಾಡಿಸುತ್ತಿದ್ದನು. ಬೆಳಿಗ್ಗೆ ಎದ್ದು ಅವರೊಬ್ಬೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.</verse>
				<verse number="6">ಒಮ್ಮೆ ಸ್ವರ್ಗನಿವಾಸಿಗಳು ಸರ್ವೇಶ್ವರಸ್ವಾಮಿಯ ಸನ್ನಿಧಿಯಲ್ಲಿ ಓಲಗಿಸಿದ್ದರು. ಸೈತಾನನೂ ಅಲ್ಲಿಗೆ ಬಂದನು.</verse>
				<verse number="7">ಸರ್ವೇಶ್ವರ ಸೈತಾನನನ್ನು ನೋಡಿ, “ಎಲ್ಲಿಂದ ಬಂದೆ?” ಎಂದು ಕೇಳಿದರು. ಅದಕ್ಕೆ ಅವನು, “ಭೂಲೋಕದಲ್ಲಿ ಗಸ್ತುತಿರುಗಿ ಬಂದಿದ್ದೇನೆ” ಎಂದನು.</verse>
				<verse number="8">ಆಗ ಸರ್ವೇಶ್ವರ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ಆತನಿಗೆ ಸರಿಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಗನು,” ಎಂದು ಹೇಳಿದರು.</verse>
				<verse number="9">ಅದಕ್ಕೆ ಸೈತಾನನು ಹೀಗೆ ಎಂದನು: “ಲಾಭವಿಲ್ಲದೆ ಯೋಬನು ನಿಮ್ಮಲ್ಲಿ ಭಯಭಕ್ತಿ ಇಟ್ಟಿದ್ದಾನೆಯೇ?</verse>
				<verse number="10">ನೀವು ಆತನಿಗೂ ಆತನ ಎಲ್ಲ ಆಸ್ತಿಪಾಸ್ತಿಗೂ ಬೇಲಿ ಹಾಕಿ ಭದ್ರಪಡಿಸಿದ್ದೀರಲ್ಲವೇ? ಆತನು ಕೈ ಹಾಕಿದ ಕೆಲಸ ಸಫಲವಾಗುವಂತೆ ಮಾಡಿದ್ದೀರಲ್ಲವೆ? ಎಂದೇ ಆತನ ಸಿರಿಸಂಪತ್ತು ಈ ನಾಡಿನಲ್ಲಿ ಬೆಳೆಯುತ್ತಾ ಬಂದಿದೆ.</verse>
				<verse number="11">ಆದರೆ ನೀವು ಕೈಹಾಕಿ ಆತನ ಸೊತ್ತನ್ನೆಲ್ಲಾ ಅಳಿಸಿಬಿಡಿ. ಆಗ ಆತನು ನಿಮ್ಮನ್ನು ಮುಖಾಮುಖಿಯಾಗಿ ನಿಂದಿಸುತ್ತಾನೋ ಇಲ್ಲವೋ ಎಂದು ನೋಡುವಿರಂತೆ!” ಎಂದನು.</verse>
				<verse number="12">ಸರ್ವೇಶ್ವರ ಸೈತಾನನಿಗೆ, “ನೋಡು, ಆತನ ಆಸ್ತಿಪಾಸ್ತಿಯೆಲ್ಲ ನಿನ್ನ ಕೈವಶಕ್ಕೆ ಬಿಟ್ಟಿದ್ದೇನೆ. ಆತನ ಮೈಮೇಲೆ ಮಾತ್ರ ಕೈಹಾಕಬೇಡ,” ಎಂದು ಅಪ್ಪಣೆಕೊಟ್ಟರು. ಕೂಡಲೆ ಸೈತಾನನು ಸರ್ವೇಶ್ವರರ ಸನ್ನಿಧಾನದಿಂದ ಹೊರಟುಹೋದನು.</verse>
				<verse number="13">ಇದಾದ ಬಳಿಕ ಯೋಬನ ಪುತ್ರಪುತ್ರಿಯರು ತಮ್ಮ ಹಿರಿಯಣ್ಣನ ಮನೆಯಲ್ಲಿ ಔತಣಮಾಡುತ್ತಿದ್ದರು.</verse>
				<verse number="14">ಆಗ ದೇವದೂತನೊಬ್ಬನು ಯೋಬನ ಬಳಿಗೆ ಬಂದು, “ನಿಮ್ಮ ಎತ್ತುಗಳು ಉಳುತ್ತಾ ಇದ್ದವು; ಕತ್ತೆಗಳು ಹತ್ತಿರದಲ್ಲೆ ಮೇಯುತ್ತಾ ಇದ್ದವು.</verse>
				<verse number="15">ಅಷ್ಟರಲ್ಲಿ, ಶೆಬದವರು ಬಂದು, ಮೇಲೆ ಬಿದ್ದು, ಅವುಗಳನ್ನು ಹೊಡೆದುಕೊಂಡು ಹೋದರು. ಕೂಲಿ ಆಳುಗಳನ್ನು ಕತ್ತಿಯಿಂದ ಕೊಂದುಹಾಕಿದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ಮುಟ್ಟಿಸಲು ಓಡಿಬಂದೆ,” ಎಂದನು.</verse>
				<verse number="16">ಅವನು ಮಾತಾಡಿ ಮುಗಿಸುವಷ್ಟರಲ್ಲೇ ಮತ್ತೊಬ್ಬನು ಬಂದು, “ದೇವರು ಆಕಾಶದಿಂದ ಬೆಂಕಿ ಸುರಿಸಿದರು. ಅದು ಕುರಿಗಳನ್ನೂ, ಕೂಲಿ ಆಳುಗಳನ್ನೂ ಸುಟ್ಟು ಭಸ್ಮಮಾಡಿತು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ಮುಟ್ಟಿಸಲು ಓಡಿಬಂದೆ,” ಎಂದನು.</verse>
				<verse number="17">ಅಷ್ಟರಲ್ಲಿ ಇನ್ನೊಬ್ಬನು ಬಂದು, “ಕಸ್ದೀಯರು ಮೂರು ಗುಂಪುಗಳಾಗಿ ಬಂದು, ಮೇಲೆ ಬಿದ್ದು, ಒಂಟೆಗಳನ್ನು ಹೊಡೆದುಕೊಂಡುಹೋದರು. ಅಲ್ಲದೆ ಆ ಕೂಲಿ ಆಳುಗಳನ್ನು ಕತ್ತಿಯಿಂದ ಸಂಹರಿಸಿದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯೊಂದಿಗೆ ನಿಮ್ಮ ಬಳಿಗೆ ಓಡಿಬಂದೆ,” ಎಂದನು.</verse>
				<verse number="18">ಅವನು ವರದಿಮಾಡುತ್ತಿದ್ದಾಗಲೇ ಬೇರೊಬ್ಬನು ಬಂದು, “ನಿಮ್ಮ ಪುತ್ರಪುತ್ರಿಯರು ಹಿರಿಯಣ್ಣನ ಮನೆಯಲ್ಲಿ ಔತಣದಲ್ಲಿದ್ದರು.</verse>
				<verse number="19">ಆಗ ತಟ್ಟನೆ ಅರಣ್ಯ ಕಡೆಯಿಂದ ಬಿರುಗಾಳಿ ಎದ್ದಿತು; ನಾಲ್ಕು ಕಡೆಯಿಂದಲೂ ಮನೆಗೆ ಬಡಿಯಿತು. ಮನೆ ಕುಸಿದುಬಿತ್ತು. ಯುವಕಯುವತಿಯರೆಲ್ಲ ಸತ್ತುಹೋದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ತಂದಿದ್ದೇನೆ,” ಎಂದು ತಿಳಿಸಿದನು.</verse>
				<verse number="20">ಆಗ ಯೋಬನು ಎದ್ದು ನಿಂತು, ದುಃಖವನ್ನು ತಾಳಲಾರದೆ ತನ್ನ ಮೇಲಂಗಿಯನ್ನು ಹರಿದುಬಿಟ್ಟ, ತಲೆಯನ್ನು ಬೋಳಿಸಿಕೊಂಡ, ನೆಲದ ಮೇಲೆ ಬಿದ್ದು, ದೇವರಿಗೆ ಸಾಷ್ಟಾಂಗವೆರಗಿ:</verse>
				<verse number="21">ಬರಿಗೈಯಲ್ಲಿ ಬಂದೆ ನಾನು ತಾಯಗರ್ಭದಿಂದ ಬರಿಗೈಯಲ್ಲಿ ಹಿಂತಿರುಗುವೆ ನಾನು ಇಲ್ಲಿಂದ ಸರ್ವೇಶ್ವರ ಕೊಟ್ಟ ಸರ್ವೇಶ್ವರ ತೆಗೆದುಕೊಂಡ ಆತನ ನಾಮಕ್ಕೆ ಸ್ತುತಿಸ್ತೋತ್ರ! ಎಂದನು.</verse>
				<verse number="22">ಈ ಎಲ್ಲ ವಿಪತ್ತು ಬಂದೊದಗಿದರೂ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪುಹೊರಿಸಲಿಲ್ಲ.</verse>
			</chapter>
			<chapter number="2">
				<verse number="1">ಸ್ವರ್ಗನಿವಾಸಿಗಳು ಇನ್ನೊಂದು ದಿನ ಸರ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಓಲಗಿಸಿದ್ದರು. ಸೈತಾನನು ಅವರ ಮಧ್ಯೆ ಕಾಣಿಸಿಕೊಂಡನು.</verse>
				<verse number="2">“ಎಲ್ಲಿಂದ ಬಂದೆ?” ಎಂದು ಸರ್ವೇಶ್ವರನು ಅವನನ್ನು ಕೇಳಿದರು. “ಭೂಲೋಕದಲ್ಲೆಲ್ಲಾ ಗಸ್ತು ತಿರುಗಿ ಬಂದಿದ್ದೇನೆ,” ಎಂದು ಅವನು ಉತ್ತರಕೊಟ್ಟನು.</verse>
				<verse number="3">ಆಗ ಸರ್ವೇಶ್ವರ ಅವನಿಗೆ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ನಿಷ್ಕಾರಣವಾಗಿ ಆತನನ್ನು ನಾಶಮಾಡಲು ಬಿಡಬೇಕೆಂದು ನೀನು ನನ್ನನ್ನು ಪೀಡಿಸಿದೆ. ಆದರೂ ಆತನು ತನ್ನ ಸತ್ಯಸಂಧತೆಯನ್ನು ಬಿಡದೆ ಇದ್ದಾನೆ ನೋಡು,” ಎಂದರು.</verse>
				<verse number="4">ಅದಕ್ಕೆ ಸೈತಾನನು, “ಚರ್ಮಕ್ಕೆ ಚರ್ಮ, ಎಂದ ಹಾಗೆ ಒಬ್ಬ ಮನುಷ್ಯ ಪ್ರಾಣ ಉಳಿಸಿಕೊಳ್ಳಲು ತನ್ನ ಸರ್ವಸ್ವವನ್ನೂ ತೊರೆದುಬಿಡುತ್ತಾನೆ.</verse>
				<verse number="5">ನೀವೀಗ ಕೈಚಾಚಿ ಯೋಬನ ಮೂಳೆಮಾಂಸಗಳನ್ನು ಮುಟ್ಟಿನೋಡಿ; ಅವನು ನಿಮ್ಮ ಮುಖದೆದುರಿಗೇ ನಿಮ್ಮನ್ನು ದೂಷಿಸುತ್ತಾನೋ ಇಲ್ಲವೋ ನೀವೇ ನೋಡುವಿರಂತೆ,” ಎಂದನು.</verse>
				<verse number="6">ಆಗ ಸರ್ವೇಶ್ವರ ಸೈತಾನನಿಗೆ, “ಸರಿ, ಆತನನ್ನು ನಿನ್ನ ಕೈಗೆ ಬಿಟ್ಟಿದ್ದೇನೆ. ಆದರೆ ಆತನ ಪ್ರಾಣವನ್ನು ಮಾತ್ರ ಮುಟ್ಟಕೂಡದು,” ಎಂದು ಆಜ್ಞಾಪಿಸಿದರು.</verse>
				<verse number="7">ಸೈತಾನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ಹೊರಟುಬಂದ. ಯೋಬನ ಅಂಗಾಲು ಮೊದಲ್ಗೊಂಡು ನಡುನೆತ್ತಿಯವರೆಗೂ ಕೆಟ್ಟಕುರುಗಳು ಹುಟ್ಟುವಂತೆ ಮಾಡಿ ಆತನನ್ನು ಬಾಧಿಸಿದ.</verse>
				<verse number="8">ಯೋಬನು ತನ್ನ ಮೈಕಡಿತವನ್ನು ತಾಳಲಾಗದೆ ಬೋಕಿಯೊಂದರಿಂದ ಕೆರೆದುಕೊಳ್ಳುತ್ತಾ ಬೂದಿಗುಂಡಿಯಲ್ಲಿ ಕುಳಿತುಕೊಳ್ಳಬೇಕಾಯಿತು.</verse>
				<verse number="9">ಆತನ ಹೆಂಡತಿ, “ನಿನ್ನ ಸತ್ಯಸಂಧತೆಯನ್ನು ಇನ್ನೂ ಬಿಡಲಿಲ್ಲವೇ? ದೇವರನ್ನು ದೂಷಿಸಿ ಸಾಯಬಾರದೇ?” ಎಂದು ಹೀಗಳೆದಳು.</verse>
				<verse number="10">ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ. ದೇವರಿಂದ ನಾವು ಸುಖಪಡೆಯಬಹುದು, ದುಃಖವನ್ನು ಮಾತ್ರ ಪಡೆಯಬಾರದೊ?” ಎಂದು ಉತ್ತರಕೊಟ್ಟ. ಇಂಥ ಪರಿಸ್ಥಿತಿಯಲ್ಲೂ ಪಾಪದ ಮಾತೊಂದೂ ಅವನ ಬಾಯಿಂದ ಬರಲಿಲ್ಲ.</verse>
				<verse number="11">ಯೋಬನಿಗೆ ಒದಗಿದ್ದ ಆಪತ್ತಿನ ಸುದ್ದಿ ಆತನ ಮೂವರು ಮಿತ್ರರಿಗೆ ಮುಟ್ಟಿತು. ಅವರು ತಮ್ಮ ತಮ್ಮ ಊರುಗಳಿಂದ, ಅಂದರೆ, ತೇಮಾನ್ಯದಿಂದ ಎಲೀಫಜನೂ, ಶೂಹ್ಯದಿಂದ ಬಿಲ್ದದನು, ನಾಮಾಥ್ಯದಿಂದ ಚೋಫರನೂ ಹೊರಟುಬಂದರು. ಯೋಬನಿಗೆ ತಮ್ಮ ಸಂತಾಪವನ್ನು ವ್ಯಕ್ತಪಡಿಸಿ ಅವನನ್ನು ಸಾಂತ್ವನಗೊಳಿಸಬೇಕೆಂಬ ಒಂದೇ ಉದ್ದೇಶದಿಂದ ಅವರು ಆತನ ಬಳಿಗೆ ಬಂದರು.</verse>
				<verse number="12">ದೂರದಿಂದ ನೋಡಿದಾಗ ಆತನ ಗುರುತುಹಚ್ಚಲು ಕೂಡ ಅವರಿಂದಾ ಆಗಲಿಲ್ಲ. ಎಂದೇ ಅವರು ಗಟ್ಟಿಯಾಗಿ ಅತ್ತರು. ದುಃಖ ತಾಳಲಾರದೆ ತಂತಮ್ಮ ಮೇಲಂಗಿಯನ್ನು ಸೀಳಿಕೊಂಡರು.</verse>
				<verse number="13">ಯೋಬನು ಅನುಭವಿಸುತ್ತಿದ್ದ ಅಪಾರ ಬಾಧೆಯನ್ನು ನೋಡಿ ಆತನೊಂದಿಗೆ ಏನನ್ನೂ ಮಾತನಾಡದೆ ಏಳು ದಿನಗಳವರೆಗೆ ಹಗಲಿರುಳೂ ಅವನ ಹತ್ತಿರದಲ್ಲೇ ನೆಲದ ಮೇಲೆ ತೆಪ್ಪನೆ ಕುಳಿತಿದ್ದರು.</verse>
			</chapter>
			<chapter number="3">
				<verse number="1">ಕೊನೆಗೆ ಯೋಬನೇ ಬಾಯ್ದೆರೆದು ತನ್ನ ಹುಟ್ಟು ದಿನವನ್ನು ಹೀಗೆಂದು ಶಪಿಸಿದ:</verse>
				<verse number="2">“ಹಾಳಾಗಿ ಹೋಗಲಿ ನಾ ಹುಟ್ಟಿದಾ ದಿನವು ‘ಗಂಡು ಮಗುವನ್ನು ಗರ್ಭಧರಿಸಿದೆ’ ಎಂದಾ ಇರುಳು!</verse>
				<verse number="3"></verse>
				<verse number="4">ಆ ದಿನವು ಕಗ್ಗತ್ತಲಾಗಲಿ ಸೂರ್ಯನ ಬೆಳಕು ಅದರ ಮೇಲೆ ಬೀಳದಿರಲಿ ಉನ್ನತ ದೇವರು ಅದನ್ನು ಲೆಕ್ಕಿಸದಿರಲಿ.</verse>
				<verse number="5">ಕಾರ್ಮೋಡಗಳು ಅದನ್ನು ಕವಿಯಲಿ ಇರುಳೂ ಮರಣದ ನೆರಳೂ ಅದನ್ನು ಆಕ್ರಮಿಸಲಿ ಹಗಲನ್ನೇ ಮಬ್ಬಾಗಿಸುವ ಮುಸುಕು ಅದನ್ನು ಹೆದರಿಸಲಿ.</verse>
				<verse number="6">ಕಾರ್ಗತ್ತಲು ಆ ರಾತ್ರಿಯನ್ನು ಮುತ್ತಲಿ ಆ ಇರುಳು ತಿಂಗಳ ಲೆಕ್ಕಕೆ ಸೇರದಿರಲಿ ಪಂಚಾಂಗದಲಿ ಅದು ಪರಿಗಣಿತವಾಗದಿರಲಿ.</verse>
				<verse number="7">ಆ ಇರುಳು ಬರಡಾಗಲಿ ಸಂತಸದ ದನಿ ಅದರಲಿ ಕೇಳದಿರಲಿ.</verse>
				<verse number="8">ಮಾಟಮಂತ್ರಗಾರರು ಅದಕ್ಕೆ ಶಾಪಹಾಕಲಿ ಘಟಸರ್ಪವೆಬ್ಬಿಸಬಲ್ಲ ಗಾರುಡಿಗರು ಅದನು ಧಿಕ್ಕರಿಸಲಿ!</verse>
				<verse number="9">ಮುಂಜಾನೆಯ ತಾರೆಗಳು ಆ ದಿನದೊಳು ಮಿಣುಕದಿರಲಿ ಇದಿರುನೋಡಿದರೂ ಬೆಳಕನು ಕಾಣದಿರಲಿ ಅರುಣೋದಯ ಕಣ್ದೆರೆವುದನು ಅದು ನೋಡದಿರಲಿ!</verse>
				<verse number="10">ಏಕೆಂದರೆ ಅದು ನನ್ನ ತಾಯಿಯ ಗರ್ಭದ್ವಾರವನು ನನಗೆ ಮುಚ್ಚಲಿಲ್ಲ ನನ್ನ ಕಣ್ಗಳಿಂದ ದುಃಖದುಗುಡವನು ಮರೆಮಾಡಲಿಲ್ಲ.</verse>
				<verse number="11">ಹುಟ್ಟುವಾಗಲೇ ನಾನೇಕೆ ಸಾಯಲಿಲ್ಲ? ಉದರದಿಂದ ಬಂದೊಡನೆ ನಾನೇಕೆ ಮಡಿಯಲಿಲ್ಲ?</verse>
				<verse number="12">ತಾಯಿಯ ಮಡಿಲು ನನ್ನನು ಹೊತ್ತುದೇಕೆ? ಆ ತಾಯ್ಮೊಲೆಗಳು ನನಗೆ ಕುಡಿಯಕೊಟ್ಟುದೇಕೆ?</verse>
				<verse number="13">ಆಗ ಸತ್ತಿದ್ದರೆ ನಾನೀಗ ಮೌನವಾಗಿ ಮಲಗಿರುತ್ತಿದ್ದೆ ಕಣ್ಮುಚ್ಚಿ ಪ್ರಶಾಂತವಾಗಿ ನಿದ್ರಿಸುತ್ತಿದ್ದೆ.</verse>
				<verse number="14">ಪಾಳು ಪೊಡವಿಯಲ್ಲಿ ನೆಲಮಾಳಿಗೆಗಳನ್ನು ನಿರ್ಮಿಸಿಕೊಂಡಿದ್ದ ರಾಜ-ಮಂತ್ರಿಗಳೊಡನೆ ನಾನಿರುತ್ತಿದ್ದೆ.</verse>
				<verse number="15">ಮನೆಗಳಲ್ಲಿ ತಮಗಾಗಿ ಬೆಳ್ಳಿಬಂಗಾರಗಳನ್ನು ತುಂಬಿಸಿಕೊಂಡಿದ್ದ ಅಧಿಪತಿಗಳೊಡನೆ ನಾನು ಶ್ರಮಿಸುತ್ತಿದ್ದೆ.</verse>
				<verse number="16">ಗರ್ಭಸ್ರಾವವಾಗಿ ಬಿದ್ದು ಹೂಳಿಟ್ಟಪಿಂಡದಂತೆ ಬೆಳಕನ್ನೇ ಕಾಣದೆ ಸತ್ತುಹೋದ ಕೂಸುಗಳಂತೆ ಪ್ರಾಯಶಃ ಜನ್ಮವೇ ಇಲ್ಲದವನಾಗಿ ನಾನಿರುತ್ತಿದ್ದೆ.</verse>
				<verse number="17">ದಣಿದವರಿಗೆ ದೊರಕುವುದು ಆ ಕೂಪದಲಿ ವಿಶ್ರಾಂತಿ ಅಣಗುವುದಲ್ಲಿ ದುರುಳರು ಕೊಡುವ ಹಾವಳಿ.</verse>
				<verse number="18">ಸೆರೆಯಾಳುಗಳಿಗೆ ದಣಿಯ ಕರ್ಕಶದನಿ ಕೇಳಿಸದು ಅಲ್ಲಿ ಖೈದಿಗಳು ಸಾಮೂಹಿಕವಾಗಿ ವಿಶ್ರಮಿಸಿಕೊಳ್ಳುವರಲ್ಲಿ.</verse>
				<verse number="19">ಚಿಕ್ಕವರು ದೊಡ್ಡವರು ಎಂಬ ತಾರತಮ್ಯ ಅಲ್ಲಿಲ್ಲ ಗುಲಾಮ ಯಜಮಾನನೆಂಬ ನಿಯಮವೂ ಇಲ್ಲ.</verse>
				<verse number="20">ಕಷ್ಟದಲ್ಲಿರುವವರಿಗೆ ಏತಕ್ಕೆ ಬೆಳಕು? ದುಃಖಪೀಡಿತನಿಗೆ ಏತಕ್ಕೆ ಬದುಕು?</verse>
				<verse number="21">ಎಷ್ಟು ಅಗೆದರೂ ದೊರಕದು ಅಂಥವರಿಗೆ ನಿಧಿನಿಕ್ಷೇಪ ಅದಕ್ಕಿಂತ ಮಿಗಿಲಾಗಿ ಬಯಸಿದರೂ ಬಾರದು ಮರಣ.</verse>
				<verse number="22">ಅವರು ಸಮಾಧಿಗೆ ಸೇರುವಾಗ ಆಗುವುದು ಅವರಿಗೆ ಅಮಿತಾನಂದ.</verse>
				<verse number="23">ಬೆಳಕು ಏತಕೆ ದಾರಿ ಮುಚ್ಚಿರುವವನಿಗೆ? ತನ್ನ ಸುತ್ತಲೂ ದೇವರೆ ಬೇಲಿಹಾಕಿರುವವನಿಗೆ?</verse>
				<verse number="24">ನಿಟ್ಟುಸಿರೇ ನನ್ನ ಮುಂದಿರುವ ಊಟ ಜಲಧಾರೆಯಂತಿದೆ ನನ್ನ ನರಳಾಟ.</verse>
				<verse number="25">ನನಗೆ ಭಯ ಹುಟ್ಟಿದೊಡನೆ ಆಪತ್ತು ಬಂದೊದಗುತ್ತದೆ ಯಾವುದಕ್ಕೆ ಅಂಜುತ್ತೇನೊ, ಅದೇ ತಪ್ಪದೆ ಸಂಭವಿಸುತ್ತದೆ.</verse>
				<verse number="26">ನನಗಿಲ್ಲ ಶಾಂತಿ, ವಿಶ್ರಾಂತಿ, ಉಪಶಮನ ನನಗಿರುವುದೆಂದರೆ ನಿರಂತರ ಯಾತನ.”</verse>
			</chapter>
			<chapter number="4">
				<verse number="1">ಆಗ ತೇಮಾನ್ಯನಾದ ಎಲೀಫಜನು ಹೀಗೆಂದನು:</verse>
				<verse number="2">“ಯಾರಾದರೂ ನಿನ್ನೊಡನೆ ಮಾತನಾಡಿದರೆ ಬೇಸರವೇಕೆ ನಿನಗೆ? ಆದರೂ ಯಾರಿಂದಾದೀತು ಮಾತನಾಡದೆ ಸುಮ್ಮನಿರುವುದಕ್ಕೆ?</verse>
				<verse number="3">ನೋಡು, ನೀನೇ ಅನೇಕರಿಗೆ ಶಿಕ್ಷಣವಿತ್ತೆ ಜೋಲುಬಿದ್ದ ಕೈಗಳಿಗೆ ಶಕ್ತಿಯನ್ನಿತ್ತೆ.</verse>
				<verse number="4">ನಿನ್ನ ನುಡಿ ಎಡವಿಬೀಳುವವರನ್ನು ನಿಲ್ಲಗೊಳಿಸಿತು ಕುಸಿದುಬೀಳುವ ಮೊಣಕಾಲುಗಳನ್ನು ಬಲಪಡಿಸಿತು.</verse>
				<verse number="5">ಈಗಲಾದರೂ ಆ ದುರಿತಗಳಿಂದ ನೀನೇ ಧೃತಿಗೆಟ್ಟಿರುವೆ ಅವು ನಿನಗೆ ತಗಲಿ ನೀನೇ ತಲ್ಲಣಗೊಂಡಿರುವೆ!</verse>
				<verse number="6">ನಿನ್ನ ನಂಬಿಕೆಗೆ ಆಧಾರ ನಿನ್ನ ಭಯಭಕ್ತಿಯಲ್ಲವೆ? ನಿನ್ನ ನಿರೀಕ್ಷೆಗೆ ಅಸ್ತಿವಾರ ನಿನ್ನ ಆದರ್ಶವಲ್ಲವೆ?</verse>
				<verse number="7">ಆಲೋಚಿಸಿ ನೋಡು, ನಿರಪರಾಧಿ ಎಂದಾದರೂ ನಾಶವಾದುದುಂಟೆ ಸತ್ಯ-ಸಂಧರು ಎಲ್ಲಿಯಾದರೂ ನಿರ್ಮೂಲವಾದುದುಂಟೆ?</verse>
				<verse number="8">ನನಗೆ ತಿಳಿದಮಟ್ಟಿಗೆ, ಕೆಟ್ಟದ್ದನ್ನು ನೆಡುವವರು, ದುಷ್ಟತನವನು ಬಿತ್ತುವವರು, ಅದನ್ನೆ ಕೊಯ್ಯುವರು.</verse>
				<verse number="9">ಅಂಥವರು ದೇವರ ಉಸಿರಿನಿಂದಲೆ ನಾಶವಾಗುವರು ಆತನ ಸಿಟ್ಟಿನಿಂದಲೆ ಸತ್ತುಹೋಗುವರು.</verse>
				<verse number="10">ಸಿಂಹಗರ್ಜನೆ, ಭೀಕರ ಸಿಂಹದಾರ್ಭಟಗಳು ಅಡಗುವವು ಯುವಸಿಂಹದ ಕೋರೆಗಳು ಮುರಿದುಹೋಗುವವು.</verse>
				<verse number="11">ಬೇಟೆಯಿಲ್ಲದೆ ಮೃಗರಾಜ ಸಾಯುವನು ಸಿಂಹದ ಮರಿಗಳು ಚದರಿಹೋಗುವವು.</verse>
				<verse number="12">ನನಗೆ ವಿಷಯವೊಂದು ಗುಟ್ಟಾಗಿ ತಿಳಿದುಬಂತು ಪಿಸುಪಿಸುಮಾತಾಗಿ ಅದು ನನ್ನ ಕಿವಿಗೆ ಬಿತ್ತು.</verse>
				<verse number="13">ಜನರಿಗೆ ಗಾಢನಿದ್ರೆ ಹತ್ತುವ ಹೊತ್ತಿನಲಿ ರಾತ್ರಿಕಾಲದ ಸ್ವಪ್ನಯೋಚನೆಗಳ ಸುಳಿಯಲಿ</verse>
				<verse number="14">ಭೀಕರ ದಿಗಿಲು ಉಂಟಾಯಿತು ನನ್ನೆಲುಬುಗಳೆಲ್ಲವನ್ನು ನಡುಗಿಸಿತು.</verse>
				<verse number="15">ಆಗ ಆತ್ಮವೊಂದು ಮುಖದ ಮುಂದೆ ಹಾದುಹೋಯಿತು ನನ್ನ ಮೈಯೆಲ್ಲ ನಿಲುಗೂದಲಾಯಿತು.</verse>
				<verse number="16">ರೂಪವೊಂದು ನನ್ನ ಕಣ್ಮುಂದೆ ನಿಂತಿತ್ತು ಆದರೂ ಅದೇನೆಂಬುದು ನನಗೆ ತಿಳಿಯದೆಹೋಯಿತು ಸೂಕ್ಷ್ಮವಾಣಿಯೊಂದು ನನಗೆ ಕೇಳಿಬಂತು:</verse>
				<verse number="17">“ದೇವರ ದೃಷ್ಟಿಯಲ್ಲಿ ಸತ್ಯವಂತನಾಗಿರಲು ಮಾನವನಿಗೆ ಸಾಧ್ಯವೆ? ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರಲು ಅವನಿಂದ ಸಾಧ್ಯವೆ?”</verse>
				<verse number="18">ತನ್ನ ಸೇವಕರಲ್ಲೂ ದೇವರು ನಂಬಿಕೆಯಿಡುವುದಿಲ್ಲವಲ್ಲಾ! ತನ್ನ ದೂತರ ಮೇಲೂ ಆತನು ತಪ್ಪುಹೊರಿಸುತ್ತಾನಲ್ಲಾ!</verse>
				<verse number="19">ಇಂತಿರಲು ದೂಳಿನಲ್ಲಿ ತಳವೂರಿ, ಮಣ್ಣಿನೊಡಲ ಹೊಕ್ಕು ಬಾಳಿ ಹುಳುವಿನಷ್ಟು ಸುಲಭವಾಗಿ ಅಳಿದುಹೋಗುವವರಲ್ಲಿ ಮತ್ತೆಷ್ಟು ತಪ್ಪೆಣಿಸಲಾರನಾತ ಅಂಥ ನರಮಾನವರಲ್ಲಿ?</verse>
				<verse number="20">ಅವರು ಉದಯಾಸ್ತಮಾನಗಳ ನಡುವೆ ಜಜ್ಜಿಹೋಗುವರು ಯಾರ ಲಕ್ಷ್ಯವೂ ಇಲ್ಲದೆ ನಿತ್ಯವಿನಾಶ ಹೊಂದುವರು.</verse>
				<verse number="21">ಅವರ ಗುಡಾರದ ಗೂಟವನ್ನು ಕೀಳಲಾಗುವುದು ಬುದ್ಧಿಹೀನರಾಗಿಯೆ ಅವರು ಸತ್ತುಹೋಗುವರು.</verse>
			</chapter>
			<chapter number="5">
				<verse number="1">“ಕೂಗಿ ನೋಡು, ಯಾರಿದ್ದಾರೆ ಉತ್ತರಕೊಡುವವರು ನಿನಗೆ? ಈಗ ಯಾರ ಕಡೆಗೆ, ಯಾವ ದೇವದೂತರ ಕಡೆಗೆ ತಿರುಗುವೆ?</verse>
				<verse number="2">ಮೂರ್ಖನಿಗೆ ನಾಶ ಕೋಪದಿಂದ ಮೂಢನಿಗೆ ಮರಣ ರೋಷದಿಂದ.</verse>
				<verse number="3">ಮೂರ್ಖನು ಬೇರೂರುವುದನು ನೋಡಿದೆ ಕೂಡಲೆ ಅವನ ನಿವಾಸ ಶಾಪಕ್ಕೀಡಾಗುವುದನು ಕಂಡೆ.</verse>
				<verse number="4">ಆಶ್ರಯ ಎಂಬುದು ಅವನ ಮಕ್ಕಳಿಗಿಲ್ಲ ನ್ಯಾಯಸ್ಥಾನದಲ್ಲಿ ಗೆಲುವು ಅವರಿಗಿಲ್ಲ ಅವರನ್ನು ಬಿಡಿಸತಕ್ಕವರಾರೂ ಇಲ್ಲ.</verse>
				<verse number="5">ಹಸಿದವರು ಅವನ ಬೆಳೆಯನು ತಿಂದುಬಿಡುವರು ಮುಳ್ಳುಬೇಲಿ ಹಾಕಿದ್ದರೂ ಅದನು ತಿಂದುಬಿಡುವರು ಅವನ ಸೊತ್ತನು ನುಂಗಲು ಬಾಯ್ದೆರೆದು ಕಾದಿರುವರು.</verse>
				<verse number="6">ಕೇಡುಹುಟ್ಟುವುದು ಮಣ್ಣಿನಿಂದಲ್ಲ ದುಃಖ ಮೊಳೆವುದು ಭೂಮಿಯಿಂದಲ್ಲ.</verse>
				<verse number="7">ಜ್ವಾಲೆಗಳು ಏರುವುದು ಮೇಲಕೆ ಜನರು ಹುಟ್ಟಿರುವುದು ದುಃಖಕೆ.</verse>
				<verse number="8">ನಾನು ನೀನಾಗಿದ್ದರೆ ದೇವರಿಗೆ ಮೊರೆಯಿಡುತ್ತಿದ್ದೆ ನನ್ನ ವಿಷಯವನು ಆತನ ಕೈಗೆ ಬಿಡುತ್ತಿದ್ದೆ.</verse>
				<verse number="9">ದೇವರೆಸಗುತ್ತಾನೆ ಅಸಾಧ್ಯ ಅತಿಶಯಗಳನು ಅಸಂಖ್ಯವಾದ ಅದ್ಭುತಕಾರ್ಯಗಳನು.</verse>
				<verse number="10">ಮಳೆಗರೆಯುತ್ತಾನೆ ಭೂಮಿಯ ಮೇಲೆ ನೀರೊದಗಿಸುತ್ತಾನೆ ಹೊಲಗದ್ದೆಗಳಿಗೆ.</verse>
				<verse number="11">ಉನ್ನತಿಗೇರಿಸುತ್ತಾನೆ ದೀನದಲಿತರನು ಸುರಕ್ಷತೆಗೊಯ್ಯುತ್ತಾನೆ ದುಃಖಿತರನು.</verse>
				<verse number="12">ಭಂಗಪಡಿಸುತ್ತಾನೆ ವಂಚಕರ ಉಪಾಯಗಳನು ಕೈಗೂಡಗೊಳಿಸನು ಅವರ ಪ್ರಯತ್ನಗಳನು.</verse>
				<verse number="13">ನಿರರ್ಥಕಗೊಳಿಸುತ್ತಾನೆ ವಕ್ರಿಗಳ ತಂತ್ರೋಪಾಯಗಳನು ಸಿಕ್ಕಿಸಿಬಿಡುತ್ತಾನೆ ಅವರವರ ಯೋಜನೆಗಳಲ್ಲೆ ಜ್ಞಾನಿಗಳನು.</verse>
				<verse number="14">ಕತ್ತಲು ಅಂಥವರನು ಸುತ್ತುವರೆದಿರುತ್ತದೆ ಹಾಡುಹಗಲಲ್ಲೆ ರಾತ್ರಿಯಲ್ಲೋ ಎಂಬಂತೆ ತಡಕಾಡುತ್ತಾರೆ ಅವರು ನಡುಹಗಲಲ್ಲೇ.</verse>
				<verse number="15">ದಿಕ್ಕಿಲ್ಲದವರನು ರಕ್ಷಿಸುತ್ತಾನೆ ದೇವರು ಅಂಥವರ ಬಾಯಿಗತ್ತಿಯಿಂದ ಬಿಡಿಸುತ್ತಾನೆ ಅವರನ್ನು ಬಲಾಢ್ಯರ ಕೈಯಿಂದ.</verse>
				<verse number="16">ಎಂತಲೇ ಬಡವನಿಗೆ ನಿರೀಕ್ಷೆ ಇರುತ್ತದೆ. ಅನ್ಯಾಯ ಆಡುವ ಬಾಯಿ ಮುಚ್ಚಿಕೊಳ್ಳುತ್ತದೆ.</verse>
				<verse number="17">ದೇವರು ಯಾರನ್ನು ತಿದ್ದುತ್ತಾನೋ ಅವನು ಧನ್ಯನು ಅಲಕ್ಷ್ಯಮಾಡಬೇಡ ನೋಡು, ಸರ್ವಶಕ್ತನ ದಂಡನೆಯನು.</verse>
				<verse number="18">ಗಾಯಮಾಡುವವನೂ ಗಾಯಕಟ್ಟುವವನೂ ದೇವರೇ ಹೊಡೆಯುವುದೂ, ಗುಣಪಡಿಸುವುದೂ ಆತನ ಕೈಯೇ.</verse>
				<verse number="19">ಐದಾರು ಇಕ್ಕಟ್ಟುಗಳಿಂದ ನಿನ್ನನು ಬಿಡಿಸುವನು ಏಳನೆಯದು ಬಂದರೂ ನಿನ್ನನು ಕೇಡು ಮುಟ್ಟದು.</verse>
				<verse number="20">ಬರಗಾಲದಲ್ಲಿ ಮರಣದಿಂದ ಕಾಪಾಡುವನು ಯುದ್ಧಕಾಲದಲ್ಲಿ ಕತ್ತಿಯಿಂದ ರಕ್ಷಿಸುವನು.</verse>
				<verse number="21">ನಾಲಿಗೆಯೆಂಬ ಚಾಟಿಹೊಡೆತಕ್ಕೆ ಮರೆಯಾಗಿರುವೆ ಪರಿವಿನಾಶ ಬಂದರೂ ನೀನು ಹೆದರದಿರುವೆ.</verse>
				<verse number="22">ಕ್ಷಾಮಡಾಮರದಲ್ಲೂ ನೀನು ನಗುತ್ತಿರುವೆ ಕಾಡುಮೃಗಗಳಿಗೂ ನೀನು ಅಂಜದಿರುವೆ.</verse>
				<verse number="23">ಹೊಲದ ಕಲ್ಲುಬಂಡೆಗಳೊಡನೆ ಒಪ್ಪಂದಮಾಡಿಕೊಳ್ಳುವೆ ಆ ಕಾಡುಪ್ರಾಣಿಗಳೊಂದಿಗೆ ನೆಮ್ಮದಿಯಿಂದ ಬಾಳುವೆ.</verse>
				<verse number="24">ನಿನ್ನ ಗುಡಾರಕ್ಕೆ ಗಂಡಾಂತರವಿಲ್ಲವೆಂಬ ನೆಮ್ಮದಿ ನಿನಗಿರುವುದು ನಿನ್ನ ಮಂದೆಯನು ನೀನು ನೋಡಬಂದಾಗ ಕೊರತೆ ಕಾಣಬರದು.</verse>
				<verse number="25">ನಿನ್ನ ಸಂತತಿ ದೊಡ್ಡದೆಂಬುದನು ನೀನು ತಿಳಿಯುವೆ ಅದು ಇಳೆಯ ಹುಲ್ಲಿನಂತೆ ಹುಲುಸಾಗಿ ಬೆಳೆವುದನು ಕಾಣುವೆ.</verse>
				<verse number="26">ಸುಗ್ಗಿಕಾಲದಲ್ಲಿ ಕಾಳುತೆನೆ ಕಣ ಸೇರುವಂತೆ ವೃದ್ಧಾಪ್ಯ ಕಳೆದ ಮೇಲೆ ನೀನು ಸಮಾಧಿ ಸೇರುವೆ.</verse>
				<verse number="27">ಇದನು ನಾವು ಪರಿಶೋಧಿಸಿದ್ದೇವೆ, ಇದು ಯಥಾರ್ಥ ಇದನು ಕೇಳಿ ತಿಳಿದುಕೊ - ಇದು ನಿನಗೆ ಹಿತಕರ.”</verse>
			</chapter>
			<chapter number="6">
				<verse number="1">ಅದಕ್ಕೆ ಉತ್ತರವಾಗಿ ಯೋಬನು ಹೀಗೆಂದನು:</verse>
				<verse number="2">“ನನ್ನ ವಿಪತ್ತನು ತೂಕಮಾಡಿ ನೋಡಿದರೆ ಒಳಿತು ನನ್ನ ದುಃಖಗಳನು ತಕ್ಕಡಿಗೆ ಹಾಕಿದರೆ ಲೇಸು.</verse>
				<verse number="3">ಆಗ ತಿಳಿಯುವುದು ನನ್ನ ವಿಪತ್ತು ಕಡಲ ತೀರದ ಮರಳಿಗಿಂತ ಭಾರವೆಂದು. ಎಂತಲೇ ನಾನಾಡಿದ ಮಾತು ದುಡುಕಿನಿಂದ ಆಡಿದ ಮಾತುಗಳೆಂದು.</verse>
				<verse number="4">ನನ್ನ ಮನದೊಳು ಸರ್ವಶಕ್ತನ ಬಾಣಗಳು ನಾಟಿವೆ ನನ್ನ ಅಂತರಂಗದೊಳು ಅವುಗಳ ವಿಷ ಹೀರಲಾಗುತ್ತಿದೆ ದೇವರಿಂದ ಬಂದ ಆತಂಕಗಳು ನನ್ನನು ಸುತ್ತುವರೆದಿವೆ.</verse>
				<verse number="5">ಹುಲ್ಲಿರಲು ಕಾಡುಕತ್ತೆ ಅರಚೀತೆ? ಮೇವಿರಲು ಗೂಳಿ ಎತ್ತು ಗುಟುರೀತೆ?</verse>
				<verse number="6">ಉಪ್ಪಿಲ್ಲದ ಸಪ್ಪೆಯನು ತಿನ್ನುತ್ತೇವೆಯೆ? ಮೊಟ್ಟೆಯೊಳಗಿನ ಲೋಳೆಯಲಿ ರುಚಿಯಿದೆಯೆ?</verse>
				<verse number="7">ಮುಟ್ಟಲು ಕೂಡ ಅಸಹ್ಯವಾದುವು ಕಾಯಿಲೆಯಲ್ಲಿ ನನಗೆ ಆಹಾರವಾದವು.</verse>
				<verse number="8">ಅಯ್ಯೋ, ನನ್ನ ವಿಜ್ಞಾಪನೆ ನೆರವೇರುವುದಿಲ್ಲವೇಕೆ? ದೇವರು ನನ್ನ ಕೋರಿಕೆಯನ್ನು ಈಡೇರಿಸುವುದಿಲ್ಲವೇಕೆ?</verse>
				<verse number="9">ದೇವರು ನನ್ನನ್ನು ನಸುಕಿಬಿಡಬಾರದೆ? ತನ್ನ ಕೈಯನ್ನು ಚಾಚಿ ಸಂಹರಿಸಿಬಿಡಬಾರದೆ?</verse>
				<verse number="10">ಆಗ ನಾನು ಸಾಂತ್ವನ ಪಡೆಯುತ್ತಿದ್ದೆ ಮಿತಿಯಿಲ್ಲದ ಯಾತನೆಯಲ್ಲೂ ಆದರ ಹೊಂದುತ್ತಿದ್ದೆ. ಪರಮಪಾವನನ ಮಾತನು ಬಿಡದೆ ಅನುಸರಿಸಿದೆನಲ್ಲವೆ?</verse>
				<verse number="11">ನಾನು ನಿರೀಕ್ಷೆಯಿಂದಿರಲು ನನಗಾಧಾರವೇನು? ನಾನು ತಾಳ್ಮೆಯಿಂದಿರಲು ನನ್ನ ಅಂತ್ಯಸ್ಥಿತಿಯೇನು?</verse>
				<verse number="12">ನನ್ನ ಬಲವು ಕಲ್ಲಿನ ಬಲವೊ? ನನ್ನ ದೇಹ ಕಂಚಿನ ದೇಹವೊ?</verse>
				<verse number="13">ನನಗೆ ಯಾವ ಸಹಾಯವೂ ಇಲ್ಲವಲ್ಲ! ನನ್ನ ತ್ರಾಣ ತೊಲಗಿಹೋಗಿದೆಯಲ್ಲಾ!</verse>
				<verse number="14">ಸಂಕಟದಲ್ಲಿ ಆಗದಾ ನೆಂಟನಿಗೆ ಸರ್ವಶಕ್ತನಲ್ಲಿ ಭಯಭಕ್ತಿ ಇರುವುದುಂಟೆ?</verse>
				<verse number="15">ಹರಿದು ಓಡುವ ತೊರೆಯಂತೆ ಉಕ್ಕಿ ಹರಿಯುವ ಪ್ರವಾಹದಂತೆ ದ್ರೋಹವೆಸಗಿದ್ದಾರೆ ಸೋದರರು ನನಗೆ.</verse>
				<verse number="16">ಕಪ್ಪಾಗಿದೆ ಆ ತೊರೆಗಳ ನೀರು ಮಂಜುಗಡ್ಡೆಯಿಂದ ಕದಡಿಹೋಗಿವೆ ಹಿಮಗಡ್ಡೆಯಿಂದ.</verse>
				<verse number="17">ಆ ತೊರೆಗಳು ಮಾಯವಾಗುತ್ತವೆ ಬೇಸಿಗೆ ಬಂದಾಗ ಬತ್ತಿಹೋಗುತ್ತವೆ ಸೆಕೆಯಾದಾಗ.</verse>
				<verse number="18">ಪ್ರಯಾಣಮಾಡುವ ವರ್ತಕರು ಇಂಥ ತೊರೆಗಳ ಮಾರ್ಗವಾಗಿ ಮರಳುಗಾಡಿನಲ್ಲೆ ನಾಶವಾಗುವರು ಅಲೆದಲೆದು ನೀರಿಗಾಗಿ.</verse>
				<verse number="19">ಅವುಗಳಿಗಾಗಿ ಹಂಬಲಿಸುತ್ತದೆ ಆ ತೇಮದ ಪ್ರಯಾಣಿಕರ ತಂಡ ಅವುಗಳಿಗಾಗಿ ಹಾತೊರೆಯುತ್ತದೆ ಶೆಬದ ವರ್ತಕರ ಪಂಗಡ.</verse>
				<verse number="20">ಆಶಿಸಿದಷ್ಟೂ ಆಶಾಭಂಗಪಡುತ್ತಾರೆ ಆ ಪ್ರಯಾಣಿಕರು ನಂಬಿದಷ್ಟೂ ನಿರೀಕ್ಷೆಗೆಡುತ್ತಾರೆ ಆ ವರ್ತಕರು.</verse>
				<verse number="21">ಅಂತೆಯೇ ನನ್ನ ವಿಷಯದಲ್ಲಿ ನೀವು ವರ್ತಿಸುತ್ತೀರಿ ನನ್ನ ಈ ವಿಪತ್ತನು ಕಂಡಕೂಡಲೇ ಹಿಂಜರಿಯುತ್ತೀರಿ.</verse>
				<verse number="22">ದಾನ ನೀಡಿರೆಂದು ನಿಮ್ಮನು ಬಿನ್ನವಿಸಿದೆನೋ? ನಿಮ್ಮಾಸ್ತಿಯಿಂದ ಲಂಚವನು ಕೋರಿದೆನೋ?</verse>
				<verse number="23">ವಿರೋಧಿಯ ಕೈಯಿಂದ ನನ್ನನು ಬಿಡಿಸಿರೆಂದು ಕೇಳಿಕೊಂಡೆನೋ? ಹಿಂಸಕರಿಂದ ನನ್ನನು ವಿಮೋಚಿಸಿರೆಂದು ಬೇಡಿಕೊಂಡೆನೋ?</verse>
				<verse number="24">ನಾನು ಮಾಡಿದ ತಪ್ಪೇನೆಂಬುದನು ತಿಳಿಸಿರಿ ನನಗೆ ನಾನು ಮೌನದಿಂದಿರುವೆನು, ಉಪದೇಶಮಾಡಿರಿ ನನಗೆ.</verse>
				<verse number="25">ನ್ಯಾಯವಾದ ಮಾತು ಎಷ್ಟೋ ಶಕ್ತಿಯುತ ನಿಮ್ಮ ತರ್ಕವಾದರೋ ನಿರರ್ಥಕ.</verse>
				<verse number="26">ಕೇವಲ ಮಾತುಗಳಿಂದ ಖಂಡಿಸಬೇಕೆಂದಿರುವಿರೊ? ದೆಸೆಗೆಟ್ಟವನ ಮಾತು ಗಾಳಿಪಾಲಾಗತಕ್ಕದಲ್ಲವೊ?</verse>
				<verse number="27">ಅನಾಥನನ್ನು ಕೊಂಡುಕೊಳ್ಳಲು ಚೀಟುಹಾಕುತ್ತೀರಿ ಆಪ್ತನನ್ನು ಮಾರಿಬಿಡಲು ವ್ಯಾಪಾರಮಾಡುತ್ತೀರಿ.</verse>
				<verse number="28">ಈಗ ದಯವಿಟ್ಟು ನೋಡಿ ನನ್ನ ಕಡೆಗೆ ಸುಳ್ಳಾಡೆನು ನಿಮ್ಮ ಮುಖದೆದುರಿಗೆ.</verse>
				<verse number="29">ದಯಮಾಡಿ ಮತ್ತೆ ಆಲೋಚಿಸಿರಿ ಅನ್ಯಾಯವಾಗದಂತೆ ಮರಳಿ ವಿಮರ್ಶಿಸಿರಿ ನನ್ನ ಸತ್ಯತೆ ತಿಳಿಯುವಂತೆ.</verse>
				<verse number="30">ರುಚಿ ವಿಷಯದಲ್ಲಿ ನಾಲಿಗೆ ತಪ್ಪುಮಾಡುತ್ತದೆಯೇ? ಸತ್ಯಾಸತ್ಯಗಳ ವಿವೇಚನೆ ನನಗಿಲ್ಲವೇ?’</verse>
			</chapter>
			<chapter number="7">
				<verse number="1">“ಮಾನವನ ಜೀವನ ಸೈನಿಕರ ಸೇವಾವಧಿಯಂತೆ ಅವನ ದಿನಗಳು ಕಳೆಯುತ್ತವೆ ಜೀತದಾಳಿನ ದಿನಗಳಂತೆ.</verse>
				<verse number="2">ನಾನಿರುವೆ ಸಂಜೆಯನು ಬಯಸುವ ದಾಸನಂತೆ ಕೂಲಿಯನು ನಿರೀಕ್ಷಿಸುವ ಕೂಲಿಯಾಳಿನಂತೆ.</verse>
				<verse number="3">ನನ್ನ ಪಾಲಿಗೆ ಬಂದಿವೆ ಬೇಸರಿಕೆಯ ಮಾಸಗಳು ನನಗೆ ನೇಮಕವಾಗಿವೆ ಆಯಾಸದ ರಾತ್ರಿಗಳು.</verse>
				<verse number="4">ಮಲಗಹೋಗುವಾಗ ‘ಯಾವಾಗ ಏಳುವೆನೋ” ಎನಿಸುತ್ತದೆ ಕಾಳ ರಾತ್ರಿ ಬೆಳೆಯುತ್ತಾ ಹೋಗುತ್ತಿರುತ್ತದೆ ಉದಯದವರೆಗೆ ಅತ್ತಿತ್ತ ಹೊರಳಿ ಸಾಕಾಗುತ್ತದೆ.</verse>
				<verse number="5">ನನ್ನ ಮಾಂಸ ಮುಸುಕಿದೆ ಹುಳುಹುಪ್ಪಟೆಗಳಿಂದ ನನ್ನ ಚರ್ಮ ಬಿರಿದಿದೆ ಕಜ್ಜಿಕಡಿತಗಳಿಂದ.</verse>
				<verse number="6">ನನ್ನ ದಿನಗಳು ಮಗ್ಗದ ಲಾಳಕ್ಕಿಂತ ತ್ವರಿತ ಅವುಗಳಿಗಿದೋ ನಿರೀಕ್ಷೆಯಿಲ್ಲದ ಮುಕ್ತಾಯ.</verse>
				<verse number="7">ನೆನೆಸಿಕೊಳ್ಳೋ ದೇವಾ, ನನ್ನ ಜೀವ ಕೇವಲ ಉಸಿರು ನನ್ನ ಕಣ್ಣುಗಳು ಇನ್ನು ಕಾಣವು ನಲಿವು.</verse>
				<verse number="8">ನನ್ನನು ನೋಡುವ ಕಣ್ಣಿಗೆ ನಾನಿನ್ನು ಕಾಣಿಸುವುದಿಲ್ಲ. ನಿನ್ನ ಕಣ್ಣು ನನ್ನ ಕಡೆಗೆ ತಿರುಗಿದ್ದರೂ ನಾನು ಬದುಕಿರುವುದಿಲ್ಲ.</verse>
				<verse number="9">ಮೋಡ ಕರಗಿ ಮಾಯವಾಗುವಂತೆ ಪಾತಾಳಕ್ಕಿಳಿದವನು ಬಾರನು ಮತ್ತೆ.</verse>
				<verse number="10">ತನ್ನ ಮನೆಗವನು ಹಿಂತಿರುಗುವುದಿಲ್ಲ ಅವನ ನಿವಾಸಕ್ಕೆ ಅವನ ಗುರುತೇ ಇಲ್ಲ.</verse>
				<verse number="11">ಬಾಯಿ ಮುಚ್ಚಿಡಲಾಗದು ನನ್ನಿಂದ ಮಾತಾಡುತ್ತೇನೆ ಆತ್ಮವೇದನೆಯಿಂದ ಪ್ರಲಾಪಿಸುತ್ತೇನೆ ಮನೋವ್ಯಥೆಯಿಂದ.</verse>
				<verse number="12">ನಾನೇನು ಕಡಲೋ? ಕಡಲಿನ ಘಟಸರ್ಪವೋ? ನೀವು ನನ್ನ ಮೇಲೆ ಕಾವಲಿಡುವುದು ಸರಿಯೋ?</verse>
				<verse number="13">‘ನನ್ನ ಹಾಸಿಗೆಯೆ ನನಗೆ ಸಾಂತ್ವನ’ ಎಂದೆ ‘ನನ್ನ ಮಂಚವೆ ಚಿಂತೆಗೆ ಶಮನ’ ಎಂದೆ.</verse>
				<verse number="14">ಆದರೂ ನೀನು ಬೆದರಿಸುತ್ತೀಯೆ ಸ್ವಪ್ನಗಳಿಂದ ಭಯಪಡಿಸುತ್ತೀಯೆ ನನ್ನನು ಕೆಟ್ಟ ಕನಸುಗಳಿಂದ.</verse>
				<verse number="15">ಎಂದೇ ಉಸಿರುಕಟ್ಟಿ ನಾನು ಪ್ರಾಣಬಿಡುವುದು ಲೇಸು ಮೂಳೆಮಾಂಸದ ಈ ತಡಿಕೆಬಾಳಿಗಿಂತ ಸಾವು ಲೇಸು.</verse>
				<verse number="16">ಬದುಕು ನನಗೆ ಬೇಸರ; ನಿರಂತರ ಬಾಳು ನನಗೆ ಅನಿಷ್ಟ ನನ್ನ ದಿನಗಳು ನಿರರ್ಥಕ, ನನ್ನ ಗೊಡವೆ ನಿನಗೆ ಬೇಕಿಲ್ಲ.</verse>
				<verse number="17">ಮನುಷ್ಯನಾದವನು ಎಷ್ಟರವನು ನೀನವನಿಗೆ ಘನತೆ ನೀಡಲು? ನೀನವನ ಮೇಲೆ ಗಮನ ಹರಿಸಲು?</verse>
				<verse number="18">ದಿನ ಬಿಡದೆ ಅವನನ್ನು ಸಂದರ್ಶಿಸಲು; ಕ್ಷಣಕ್ಷಣಕ್ಕೂ ಅವನನ್ನು ಪರೀಕ್ಷಿಸಲು?</verse>
				<verse number="19">ನಿನ್ನ ದೃಷ್ಟಿಯನು ನನ್ನ ಮೇಲೆ ಎಷ್ಟುಕಾಲ ಇಡುವೆ? ಗುಟುಕು ಉಗುಳನು ನುಂಗಲು ಬಿಡುವುದಿಲ್ಲವೆ?</verse>
				<verse number="20">ನರಮಾನವರ ಮೇಲೆ ಬೆಂಗಾವಲಿರುವವನೇ, ಭಾರವಾಗಿರುವೆನು ನನಗೆ ನಾನೇ. ನಾನು ಪಾಪಮಾಡಿದ್ದಾದರೂ ನಿನಗೇನು ಮಾಡಿದೆ? ನನ್ನನ್ನೇಕೆ ನಿನ್ನ ಹೊಡೆತಕ್ಕೆ ಗುರಿಪಡಿಸಿದೆ?</verse>
				<verse number="21">ನನ್ನ ಅಪರಾದವನ್ನು ನೀನು ಕ್ಷಮಿಸಬಾರದೆ? ನನ್ನ ದೋಷವನ್ನು ನೀನು ಪರಿಹರಿಸಬಾರದೆ? ಮಣ್ಣಿನೊಳಗೆ ಬಿದ್ದಿರುವೆ ನಾನು ಈಗ ನಾನು ಇಲ್ಲವಾಗಿರುವೆ ನೀ ಹುಡುಕುವಾಗ.</verse>
			</chapter>
			<chapter number="8">
				<verse number="1">ಆಗ ಶೂಹ್ಯನಾದ ಬಿಲ್ದದನು ಇಂತೆಂದನು:</verse>
				<verse number="2">“ಇನ್ನೆಷ್ಟರವರೆಗೆ ಹೀಗೆ ನುಡಿಯುತ್ತಿರುವೆ? ಬಿರುಗಾಳಿಯಂಥ ಮಾತುಗಳನ್ನಾಡುತ್ತಿರುವೆ?</verse>
				<verse number="3">ಅನ್ಯಾಯವಾದ ತೀರ್ಪನು ಕೊಡುತ್ತಾನೆಯೆ ದೇವರು? ಸತ್ಯವನ್ನು ಡೊಂಕುಮಾಡುತ್ತಾನೆಯೆ ಸರ್ವಶಕ್ತನು?</verse>
				<verse number="4">ಬಹುಶಃ ನಿನ್ನ ಮಕ್ಕಳು ಆತನ ವಿರುದ್ಧ ಪಾಪಮಾಡಿರಬೇಕು ಎಂದೇ ಆತ ಅವರನು ಆ ದ್ರೋಹದ ನಿಮಿತ್ತ ದಂಡಿಸಿರಬೇಕು.</verse>
				<verse number="5">ಶುದ್ಧನೂ ಸತ್ಯವಂತನೂ ನೀನಾಗಿದ್ದರೆ ದೇವರ ಪ್ರಸನ್ನತೆಯನು ಅರಸಿದೆಯಾದರೆ ಆ ಸರ್ವಶಕ್ತನನು ವಿಜ್ಞಾಪಿಸಿದೆಯಾದರೆ,</verse>
				<verse number="6">ನಿಶ್ಚಯವಾಗಿ ನಿನಗೋಸ್ಕರ ಎಚ್ಚೆತ್ತು ಬರುವನು ಸತ್ಯವಂತನ ಮನೆಮಾರನು ಸಮೃದ್ಧಿಗೊಳಿಸುವನು.</verse>
				<verse number="7">ಆಗ ನಿನ್ನ ಭವಿಷ್ಯ ಎಷ್ಟು ಉಜ್ವಲವಾಗಿರುತ್ತದೆಂದರೆ ನಿನ್ನ ಮೊದಲಿನ ಸ್ಥಿತಿ ಕೂಡ ಅತ್ಯಲ್ಪವಾಗಿ ಕಾಣುವುದು ನಿನಗೆ.</verse>
				<verse number="8">ವಿಚಾರಿಸಿ ನೋಡು ಪುರಾತನ ಕಾಲವನು ಧ್ಯಾನಿಸಿ ನೋಡು ಪೂರ್ವಜರ ಅನುಭವವನು.</verse>
				<verse number="9">ನಾವಾದರೋ ನಿನ್ನೆ ಹುಟ್ಟಿದವರು, ಏನೂ ಅರಿಯದವರು ಭೂಲೋಕದಲ್ಲಿನ ನಮ್ಮ ಬಾಳು ಕೇವಲ ನೆರಳು.</verse>
				<verse number="10">ನಿನಗೆ ಬೋಧಿಸಿ ಬುದ್ಧಿಹೇಳುವರು ಪೂರ್ವಜರು ಅವರ ಅನುಭವದಿಂದ ಬಂದ ವಚನಗಳಿವು:</verse>
				<verse number="11">ಕೆಸರಿಲ್ಲದೆ ಆಪುಹುಲ್ಲು ಬೆಳೆಯುವುದುಂಟೆ? ಜವುಗಿಲ್ಲದೆ ಜಂಬು ಹುಲ್ಲು ಮೊಳೆಯುವುದುಂಟೆ</verse>
				<verse number="12">ಆದರೂ ಮಿಕ್ಕ ಎಲ್ಲ ಸಸಿಗಳಿಗಿಂತ ಬಲು ಮುಂಚಿತವಾಗಿಯೆ ಒಣಗಿಹೋಗುತ್ತವೆ ಅವು ಯಾರೂ ಕೊಯ್ಯದೆಯೆ.</verse>
				<verse number="13">ದೇವರನ್ನು ಮರೆಯುವವರೆಲ್ಲರ ಗತಿ ಇದುವೆ ಭಕ್ತಿಹೀನನ ನಿರೀಕ್ಷೆ ನಿರರ್ಥಕವೆ.</verse>
				<verse number="14">ಅಂಥವನ ಭರವಸೆ ಭಂಗವಾಗುವುದು ಅವನ ನಿವಾಸ ಜೇಡರ ಗೂಡಿನಂತಾಗುವುದು.</verse>
				<verse number="15">ಒರಗಿಕೊಂಡರೆ ಆ ಮನೆ ನಿಲ್ಲದು ಹಿಡಿದುಕೊಂಡರೆ ಅದು ಬಿಗಿಯಿರದು.</verse>
				<verse number="16">ಅಂಥವನು ಬಿಸಿಲಿನಲ್ಲೂ ಹಸಿರಾಗಿರುವ ಬಳ್ಳಿಯಂತೆ ಹರಡಿಕೊಳ್ಳುವನು ತೋಟದೊಳಗೆ ಕವಲೊಡೆದು;</verse>
				<verse number="17">ಕಲ್ಲುಕುಪ್ಪೆಯ ಮೇಲೂ ಬೇರುಗಳನ್ನು ಹೆಣೆದುಕೊಳ್ವನು ಕಲ್ಲಿನ ಸಂದಿಗೊಂದಿಗಳ ನಡುವೆ ನುಗ್ಗಬಲ್ಲನು ಅವನು;</verse>
				<verse number="18">ಅಲ್ಲಿಂದ ಅವನನ್ನು ಕಿತ್ತುಹಾಕಿದ್ದೇ ಆದರೆ ಅವನನ್ನು ಕಂಡದ್ದೇ ಇಲ್ಲ ಎಂದು ಬೊಂಕುವುದು ಆ ಸ್ಥಳ.</verse>
				<verse number="19">ಇದುವೇ ಅಂಥವನಿಗೆ ಗಿಟ್ಟುವ ಸುಖ ಬೇರೆಯವರು ಮೊಳೆವರು ಅವನಿದ್ದ ಆ ನೆಲದಿಂದ.</verse>
				<verse number="20">ದೇವರು ನಿರ್ದೋಷಿಯನು ತ್ಯಜಿಸಿಬಿಡುವುದಿಲ್ಲ ಕೆಡುಕರಿಗೆ ನೆರವಾಗಲು ಆತ ಕೈ ನೀಡುವುದಿಲ್ಲ.</verse>
				<verse number="21">ತುಂಬಿಸುವನಾತ ನಿನ್ನ ಬಾಯನು ನಗೆಯಿಂದ ನಿನ್ನ ತುಟಿಗಳನ್ನು ಉತ್ಸಾಹಧ್ವನಿಯಿಂದ.</verse>
				<verse number="22">ಅವಮಾನ ಮುಸುಕುವುದು ನಿನ್ನ ಹಗೆಗಳನ್ನು ದುರುಳರಾ ನಿವಾಸವಾದರೋ ನಿರ್ಮೂಲವಾಗುವುದು.”</verse>
			</chapter>
			<chapter number="9">
				<verse number="1">ಅದಕ್ಕೆ ಯೋಬನು ಉತ್ತರಿಸುತ್ತಾ ಹೀಗೆಂದನು:</verse>
				<verse number="2">“ಹೌದು, ನೀನು ಹೇಳುವುದು ಸರಿಯೆಂದು ನನಗೆ ಗೊತ್ತು: ನರಮಾನವ ದೇವರ ಮುಂದೆ ಸತ್ಯವಂತನಾಗಿರುವುದೆಂತು?</verse>
				<verse number="3">ಯಾರಾದರೂ ಆತನೊಡನೆ ವಾದಿಸಲು ಇಷ್ಟಪಟ್ಟರೂ ಆತನ ಸಹಸ್ರ ಪ್ರಶ್ನೆಗಳೊಂದಕ್ಕೂ ಉತ್ತರಿಸಲಾಗದು.</verse>
				<verse number="4">ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ.</verse>
				<verse number="5">ಆತ ಪರ್ವತಗಳನ್ನೇ ಸರಿಸುತ್ತಾನೆ ಅರಿಯದಂತೆ ಅವುಗಳನ್ನು ಉರುಳಿಸುತ್ತಾನೆ ಸಿಟ್ಟುಗೊಂಡಂತೆ.</verse>
				<verse number="6">ಅದರ ಸ್ಥಾನದಿಂದ ಭೂಮಿಯನೆ ಕದಲಿಸುತ್ತಾನೆ ಅದರ ಸ್ತಂಭಗಳು ನಡುಗುವಂತೆ ಮಾಡುತ್ತಾನೆ.</verse>
				<verse number="7">ಆತ ಆಜ್ಞೆ ಮಾಡಿದ್ದೇ ಆದರೆ ಸೂರ್ಯನು ಉದಯಿಸನು ಮುದ್ರೆ ಹಾಕಿದ್ದೇ ಆದರೆ ನಕ್ಷತ್ರವೂ ಮಿನುಗದು.</verse>
				<verse number="8">ಆಕಾಶಮಂಡಲವನ್ನು ಹರಡಿದವನು ದೇವರೇ ಕಡಲಿನ ತರಂಗಗಳನ್ನು ಮೆಟ್ಟಿದವನು ಆತನೊಬ್ಬನೇ.</verse>
				<verse number="9">ದಕ್ಷಿಣದ ನಕ್ಷತ್ರಗ್ರಹಗಳನೂ ಸಪ್ತರ್ಷಿಮಂಡಲವನೂ ಮೃಗಶಿರವನೂ ಕೃತ್ತಿಕೆಯನೂ ನಿರ್ಮಿಸಿದವನು ಆತನೇ.</verse>
				<verse number="10">ಅಪ್ರತಿಮ ಮಹಾಕಾರ್ಯಗಳನ್ನು ಎಸಗಿರುವನು ಅಸಂಖ್ಯ ಅದ್ಭುತಕರ ಪವಾಡಗಳನ್ನು ಮಾಡಿರುವನು.</verse>
				<verse number="11">ಇಗೋ, ಪಕ್ಕದಲ್ಲೇ ಆತ ದಾಟಿಹೋದರೂ ಕಾಣಿಸನು ನನ್ನ ಮುಂದುಗಡೆಯೇ ಹಾದುಹೋದರೂ ತಿಳಿಯದು.</verse>
				<verse number="12">ಕಿತ್ತುಕೊಂಡು ಹೋಗುವ ಆತನಿಗೆ ಅಡ್ಡಿಮಾಡುವವರಾರು? ‘ಏನು ಮಾಡುತ್ತಿರುವೆ?’ ಎಂದು ಆತನನ್ನು ಕೇಳುವವರಾರು?</verse>
				<verse number="13">ರಹೆಬನ ಸಹಾಯಕರು ಕಾಲಿಗೆರಗಿದರೂ ದೇವರು ತನ್ನ ಸಿಟ್ಟು ಸಿಡುಕನು ಬಿಟ್ಟುಬಿಡನು.</verse>
				<verse number="14">ದೇವರೊಂದಿಗೆ ವಾದಿಸಲು ನಾನು ಅಶಕ್ತನು ಆತನಿಗೆ ತಕ್ಕ ಉತ್ತರ ಕೊಡಲು ನಾನೆಷ್ಟರವನು!</verse>
				<verse number="15">ನಾನು ಸತ್ಯವಂತನಾಗಿದ್ದರೂ ವಾದಿಸಲಾರೆನು ನನ್ನ ನ್ಯಾಯಾಧೀಶನಲ್ಲಿ ದಯೆಯನು ಕೋರುವೆನು.</verse>
				<verse number="16">ನಾನು ಕರೆದಾಗ ಓಗೊಟ್ಟಿದ್ದರೂ ನನ್ನ ವಿಜ್ಞಾಪನೆಯನ್ನು ಆಲಿಸುವನೆಂದು ನಂಬುತ್ತಿರಲಿಲ್ಲ.</verse>
				<verse number="17">ನನ್ನನ್ನು ಬಿರುಗಾಳಿಯಿಂದ ಬಡಿಯುತ್ತಾನೆ ಕಾರಣವಿಲ್ಲದೆ ಗಾಯದ ಮೇಲೆ ಗಾಯ ಮಾಡುತ್ತಾನೆ.</verse>
				<verse number="18">ನನಗೆ ಉಸಿರಾಡಲೂ ಬಿಡದೆ ನನ್ನ ಹೊಟ್ಟೆಯನ್ನು ಕಹಿಯಾದವುಗಳಿಂದ ತುಂಬಿಸುತ್ತಾನೆ.</verse>
				<verse number="19">ಶಕ್ತಿಪ್ರಯೋಗದ ಮಾತೆತ್ತಿದರೆ, ‘ಇಗೋ, ನಾನೇ ಶಕ್ತಿಸ್ವರೂಪ’ ಎನ್ನುತ್ತಾನೆ. ನ್ಯಾಯವಿಚಾರಣೆ ಆಗಲಿಯೆಂದರೆ, ‘ನನ್ನನ್ನು ಕರೆಯಿಸುವವನಾರು?’ ಎನ್ನುತ್ತಾನೆ.</verse>
				<verse number="20">ನಾನು ಸತ್ಯವಂತನಾಗಿದ್ದರೂ ಬಾಯೇ ನಾನು ಅಪರಾಧಿಯೆಂದು ಒಪ್ಪಿಕೊಳ್ಳುತ್ತದೆ. ನಾನು ನಿರ್ದೋಷಿಯಾಗಿದ್ದರೂ ‘ನಿನ್ನದು ವಕ್ರಬುದ್ಧಿ’ ಎನ್ನುತ್ತದೆ.</verse>
				<verse number="21">ನಾನು ನಿರ್ದೋಷಿಯೇ ಹೌದು; ಅದರ ಬಗ್ಗೆ ನನಗಿಲ್ಲ ಚಿಂತೆ. ನನ್ನ ಪ್ರಾಣ ಕೂಡ ನನಗೆ ತೃಣವಾಗಿಬಿಟ್ಟಿದೆ.</verse>
				<verse number="22">ಎಲ್ಲವೂ ಒಂದೇ ಆಗಿಬಿಟ್ಟಿದೆ. ಆದ್ದರಿಂದಲೇ ಇಂತೆನ್ನುತ್ತೇನೆ: ‘ದೋಷಿಯೋ ನಿರ್ದೋಷಿಯೋ’ ದೇವರು ಎಲ್ಲರನೂ ನಾಶಗೊಳಿಸುತ್ತಾನೆ.</verse>
				<verse number="23">ಅಕಸ್ಮಾತ್ತಾಗಿ ಮಹಾವಿನಾಶ ಬಂದೊದಗಿದರೂ ನಿರ್ದೋಷಿಗಳ ಅವಸ್ಥೆ ಕಂಡು ಹಾಸ್ಯಮಾಡುತ್ತಾನೆ.</verse>
				<verse number="24">ದೇಶವು ದುರುಳರ ಕೈವಶವಾಗಿದ್ದರೂ ನ್ಯಾಯಾಧೀಶರ ಮುಖಕ್ಕೆ ಮುಸುಕುಹಾಕುತ್ತಾನೆ. ಇದನ್ನು ಮಾಡುವವರು ದೇವರಲ್ಲದೆ ಮತ್ತೆ ಯಾರು?</verse>
				<verse number="25">ನನ್ನ ದಿನಗಳು ಓಟಗಾರನಿಗಿಂತ ವೇಗ ಅವು ಓಡುತ್ತವೆ ಕಾಣದೆ ಯಾವುದೊಂದು ಸುಖ.</verse>
				<verse number="26">ಬೆಂಡಿನ ಹರಗಲು ದೌಡಾಯಿಸುವಂತೆ ಬೇಟೆಯ ಮೇಲೆ ಗರುಡವೆರಗುವಂತೆ ಕಳೆದುಹೋಗುತ್ತವೆ ಶೀಘ್ರಗತಿಯಲ್ಲೆ.</verse>
				<verse number="27">ನನ್ನ ಪ್ರಲಾಪವನ್ನು ನಾನು ಮರೆತುಬಿಟ್ಟರೆ ಬಾಡಿದ ಮುಖವನ್ನು ಮಾರ್ಪಡಿಸಿಕೊಂಡರೆ ಹರ್ಷಿಸುವೆನೆಂದು ನಾನು ಮನಸ್ಸುಮಾಡಿದರೆ.</verse>
				<verse number="28">ಸಮಸ್ತ ದುಃಖದುಗುಡಗಳ ನೆನಪು ನನಗೆ ತರುತ್ತವೆ ದಿಗಿಲು ನನಗೆ ಗೊತ್ತು, ನೀ ನನ್ನನು ನಿರಪರಾಧಿ ಎಂದೆಣಿಸಲಾರೆಯೆಂದು.</verse>
				<verse number="29">ಅಪರಾಧಿಯೆಂದೇ ನನಗೆ ನಿರ್ಣಯವಾಗಬೇಕಿದ್ದಲ್ಲಿ ನಾನೇಕೆ ಪ್ರಯಾಸಪಡಬೇಕು ವ್ಯರ್ಥವಾಗಿ?</verse>
				<verse number="30">ಹಿಮದಿಂದ ನಾನು ಸ್ನಾನಮಾಡಿದರೂ ಚೌಳಿನಿಂದ ನಾನು ಕೈತೊಳೆದರೂ</verse>
				<verse number="31">ಮುಳುಗಿಸಿಬಿಡುವೆ ನನ್ನನ್ನು ತಿಪ್ಪೆಗುಂಡಿಯಲ್ಲಿ ನನ್ನ ಉಡಿಗೆ ತೊಡಿಗೆಗಳೂ ಅಸಹ್ಯಪಡುವುವು ನನ್ನನು ನೋಡಿ.</verse>
				<verse number="32">ದೇವರು ನನ್ನಂಥ ನರನಲ್ಲ, ನಾನಾತನಿಗೆ ಉತ್ತರಿಸಲು ನಾವಿಬ್ಬರೂ ನ್ಯಾಯಾಲಯದಲ್ಲಿ ಕೂಡಿ ವಾದಿಸಲು.</verse>
				<verse number="33">ನಮ್ಮಿಬ್ಬರ ನಡುವೆ ನಿರ್ಣಯಿಸತಕ್ಕವನು ಇಲ್ಲ ಮಧ್ಯಸ್ಥನಾಗಬಲ್ಲ ನ್ಯಾಯಾಧಿಪತಿ ಇಲ್ಲ.</verse>
				<verse number="34">ನನ್ನ ಮೇಲೆತ್ತಿರುವ ಕೋಲನ್ನು ಬಿಸಾಡಲಿ ಆತನ ಭಯಭೀತಿ ನನ್ನನು ಹೆದರಿಸದಿರಲಿ.</verse>
				<verse number="35">ಆಗ ಭಯಪಡದೆ ಮಾತನಾಡುವೆನು ಅಂಜಿಕೆಗೆ ನನ್ನಲ್ಲಿ ಆಸ್ಪದ ಇರದು.</verse>
			</chapter>
			<chapter number="10">
				<verse number="1">“ನನ್ನ ಬಾಳೇ ನನಗೆ ಬೇಸರವಾಗಿದೆ ಎದೆಬಿಚ್ಚಿ ಮೊರೆಯಿಡುತ್ತಿರುವೆ ಕಹಿ ಮನದಿಂದ ನುಡಿಯುತ್ತಿರುವೆ.</verse>
				<verse number="2">ನಾನು ದೇವರಿಗೆ ಇಂತೆನ್ನುವೆ: ‘ನನ್ನನ್ನು ನಿರ್ಣಯಿಸಬೇಡ ಅಪರಾಧಿಯೆಂದು ನನ್ನ ಮೇಲೆ ನಿನಗಿರುವ ಆಪಾದನೆಯನು ತಿಳಿಸಿಬಿಡು.</verse>
				<verse number="3">ದುರುಳರ ಯೋಜನೆಯನು ನೀನು ಪುರಸ್ಕರಿಸಬಹುದೆ? ನಿನ್ನ ಕೈಕೃತಿಯಾದ ನನ್ನನು ತಿರಸ್ಕರಿಸಿ ಬಾಧಿಸುವುದು ಸರಿಯೆ?</verse>
				<verse number="4">ಮನುಜರಂಥ ಕಣ್ಣುಗಳು ನಿನಗಿದೆಯೋ? ಮನುಷ್ಯರಂತೆ ನೀನು ನೋಡುತ್ತೀಯೋ?</verse>
				<verse number="5">ನಿನ್ನ ದಿನಗಳು ಮನುಷ್ಯನ ಅಲ್ಪದಿನಗಳಂತಿವೆಯೋ? ನಿನ್ನ ವರುಷಗಳು ಮಾನವನ ವರುಷಗಳಷ್ಟೆಯೋ?</verse>
				<verse number="6">ನನ್ನ ತಪ್ಪುಗಳನ್ನು ಹುಡುಕುವ ನಿನಗೆ ನನ್ನ ಪಾಪಗಳನ್ನು ವಿಚಾರಿಸುವ ನಿನಗೆ</verse>
				<verse number="7">ನಾನು ಅಪರಾಧಿಯಲ್ಲವೆಂದು ತಿಳಿದಿದೆಯಲ್ಲವೆ? ನಿನ್ನ ಕೈಯಿಂದ ಬಿಡಿಸಬಲ್ಲವರಾರೂ ಇಲ್ಲವಲ್ಲವೆ?</verse>
				<verse number="8">ನನ್ನನ್ನು ನಿರ್ಮಿಸಿ ರೂಪಿಸಿದಾತ ನೀನು ಆದರೆ ಈಗ ಮುಗಿಸಿಬಿಡುವಿಯೋ ಮಾನಸಾಂತರಗೊಂಡು?</verse>
				<verse number="9">ಜೇಡಿಮಣ್ಣಿನಿಂದ ನನ್ನನ್ನು ಮಾಡಿದೆಯೆಂದು ನೆನೆಸಿಕೊ ಆದರೆ ಈಗ ಮರಳಿ ಮಣ್ಣಾಗುವಂತೆ ಮಾಡುವಿಯೋ?</verse>
				<verse number="10">ನನ್ನನ್ನು ಸುರಿಸಿದೆ ಹಾಲಿನಂತೆ ಹೆಪ್ಪುಗಟ್ಟಿಸಿದೆ ಮೊಸರಿನಂತೆ;</verse>
				<verse number="11">ನನ್ನನ್ನು ಹೆಣೆದೆ ಎಲುಬು ನರಗಳಿಂದ ನನ್ನನ್ನು ಹೊದಿಸಿದೆ ಮಾಂಸ ಚರ್ಮಗಳಿಂದ;</verse>
				<verse number="12">ಜೀವವಿತ್ತು ಅಚಲ ಪ್ರೀತಿ ತೋರಿಸಿದೆ ನಿನ್ನ ಪರಾಮರಿಕೆಯಿಂದ ನನ್ನ ಪ್ರಾಣವನ್ನು ಕಾಪಾಡಿದೆ.</verse>
				<verse number="13">ಆದರೂ ನನಗೆ ಚೆನ್ನಾಗಿ ಗೊತ್ತಿತ್ತು; ನಿನ್ನ ಹೃದಯದಲ್ಲಿ ಗುಟ್ಟಾದ ಯೋಜನೆಯೊಂದು ಹುದುಗಿತ್ತು;</verse>
				<verse number="14">ನಾನು ತಪ್ಪುಮಾಡಿದರೆ ಅದನು ಕಂಡುಹಿಡಿದು ಆ ದೋಷಕ್ಕೆ ಕ್ಷಮೆ ನೀಡಕೂಡದೆಂದು.</verse>
				<verse number="15">ನಾನು ದುರ್ಮಾರ್ಗಿಯಾದರಂತೂ ನನಗಿಲ್ಲ ಗತಿ ಸನ್ಮಾರ್ಗಿಯಾದರೂ ಕೂಡ ನಡೆವಂತಿಲ್ಲ ತಲೆಯೆತ್ತಿ ಏಕೆಂದರೆ ನಾಚಿ ನಿಂತಿರುವೆ, ಯಾತನೆಯ ಹೊರೆಹೊತ್ತಿ.</verse>
				<verse number="16">ನಾನು ತಲೆಯೆತ್ತಿದರೆ ಬೇಟೆಯಾಡುವೆ ನನ್ನನ್ನು ಸಿಂಹದಂತೆ ಮತ್ತೆ ನಿನ್ನ ಶಕ್ತಿ ಸಾಮರ್ಥ್ಯವನ್ನು ನನ್ನ ಮೇಲೆ ಪ್ರಯೋಗಿಸುವೆ.</verse>
				<verse number="17">ನನಗೆ ವಿರುದ್ಧ ಹೊಸ ಹೊಸ ಸಾಕ್ಷಿಗಳನ್ನು ಬರಮಾಡುವೆ ನನ್ನ ಮೇಲೆ ಹೆಚ್ಚುಹೆಚ್ಚಾಗಿ ಸಿಟ್ಟುಗೊಳ್ಳುವೆ ಅಲೆಅಲೆಯಾಗಿ ಹಗೆಗಳನ್ನು ನನ್ನ ಮೇಲೆ ಧಾಳಿಮಾಡ ಬಿಡುವೆ.</verse>
				<verse number="18">ತಾಯ ಗರ್ಭದಿಂದ ನನ್ನನ್ನೇಕೆ ಹೊರತೆಗೆದೆ? ನಾನು ಸತ್ತುಹೋಗಬಹುದಿತ್ತು ಯಾರೂ ನೋಡುವುದಕ್ಕೆ ಮುಂಚೆ!</verse>
				<verse number="19">ಆಗ ನಾನು ಇಲ್ಲದವನಾಗುತ್ತಿದ್ದೆ ಗರ್ಭದಿಂದಲೆ ಸಮಾಧಿ ಸೇರುತ್ತಿದ್ದೆ.</verse>
				<verse number="20">ನನಗುಳಿದಿರುವ ದಿನಗಳು ಕೆಲವೇ ಕಿಂಚಿತ್ತು ವಿಶ್ರಮಿಸಲು ನನ್ನನು ಬಿಟ್ಟುಬಿಡಬಾರದೆ?’</verse>
				<verse number="21">ಮರಳಿ ಹಿಂದಿರುಗಲಾಗದ ನಾಡನು ನಾನು ಸೇರಲಿರುವೆ ಅಂಧಕಾರವೂ ಗಾಢಾಂಧಕಾರವೂ ಅಲ್ಲಿ ತುಂಬಿವೆ.</verse>
				<verse number="22">ಕಾರ್ಗತ್ತಲೂ ಗಾಢಾಂಧಕಾರವೂ ಅಲ್ಲಿವೆ ಅರಾಜಕತೆಯೂ ಕಾರಿರುಳೂ ಅದನು ಆವರಿಸಿವೆ ಬೆಳಕೇ ಕಾರಿರುಳಾಗಿ ಆ ನಾಡನ್ನು ಕವಿದಿದೆ.”</verse>
			</chapter>
			<chapter number="11">
				<verse number="1">ಆಗ ನಾಮಾಥ್ಯನಾದ ಚೋಫರನು ಹೀಗೆಂದ:</verse>
				<verse number="2">“ಇಷ್ಟೆಲ್ಲ ಮಾತುಗಳಿಗೆ ತಕ್ಕ ಉತ್ತರ ಬೇಡವೆ? ಮಾತಿನಮಲ್ಲನು ನೀತಿವಂತ ಎನಿಸಿಕೊಳ್ಳುವನೆ?</verse>
				<verse number="3">ನಿನ್ನ ವಾಕ್ ಚಮತ್ಕಾರಕ್ಕೆ ಜನ ಬಾಯಿಮುಚ್ಚಿಕೊಳ್ಳಬೇಕೆ? ನಿನ್ನ ಕುಚೋದ್ಯಕ್ಕೆ ನಿನಗಾಗಬೇಡವೆ ನಾಚಿಕೆ?</verse>
				<verse number="4">ನೀನು ಹೇಳುವುದೇ ಸತ್ಯವೆಂದು ವಾದಿಸುತ್ತಿರುವೆ ದೇವರ ದೃಷ್ಟಿಯಲ್ಲಿ ನೀನು ಪರಿಶುದ್ಧನು ಎನ್ನುತ್ತಿರುವೆ.</verse>
				<verse number="5">ಆದರೆ ದೇವರೇ ಬಾಯ್ದೆರೆದು ನಿನಗೆ ವಿರುದ್ಧ ಮಾತನಾಡಿದರೆ ಒಳಿತು!</verse>
				<verse number="6">ಜ್ಞಾನದ ರಹಸ್ಯಗಳನು ದೇವರೇ ನಿನಗೆ ತಿಳಿಸಲಿ ಸುಜ್ಞಾನ ಬಹುಮುಖವಾದುದೆಂದು ಆತನೇ ತೋರಿಸಲಿ ನಿನ್ನ ದೋಷಗಳನ್ನೆಲ್ಲ ಆತ ಲಕ್ಷಿಸಿಲ್ಲ ಎಂಬುದು ನಿನಗೆ ತಿಳಿದಿರಲಿ.</verse>
				<verse number="7">ನೀನು ಕಂಡುಕೊಳ್ಳಬಲ್ಲೆಯಾ ದೇವರ ಅಂತರಾಳವನ್ನು? ಗ್ರಹಿಸಿಕೊಳ್ಳಬಲ್ಲೆಯಾ ಸರ್ವಶಕ್ತನ ಇತಿಮಿತಿಯನ್ನು?</verse>
				<verse number="8">ಅದು ಆಕಾಶಕ್ಕಿಂತಲೂ ಎತ್ತರ; ನಿನ್ನಿಂದೇನು ಮಾಡಲು ಸಾಧ್ಯ? ಅದು ಪಾತಾಳಕ್ಕಿಂತಲೂ ಆಳ; ನಿನ್ನಿಂದ ಹೇಗೆ ತಿಳಿಯಲು ಸಾಧ್ಯ?</verse>
				<verse number="9">ಅದು ಭೂಮಿಗಿಂತಲು ಉದ್ದ ಸಮುದ್ರಕ್ಕಿಂತಲು ಅಗಲ.</verse>
				<verse number="10">ಆತ ಹಾದುಹೋದರೂ ಸೆರೆಹಿಡಿದರೂ ನ್ಯಾಯಾಲಯಕ್ಕೆ ಎಳೆದರೂ ತಡೆವರಾರು?</verse>
				<verse number="11">ಆತ ದುರುಳರನು ಗುರುತು ಹಚ್ಚುತ್ತಾನೆ ನೆರವಿಲ್ಲದೆ ಅಕ್ರಮವನು ಕಂಡುಹಿಡಿಯುತ್ತಾನೆ.</verse>
				<verse number="12">ಕಾಡುಕತ್ತೆಮರಿ ನರಜನ್ಮ ತಾಳಿದಾಗ ಪೆದ್ದ ಮಾನವ ಬುದ್ಧಿವಂತನಾದ!</verse>
				<verse number="13">ಸರಿಪಡಿಸಿಕೋ ನಿನ್ನ ಅಂತರಂಗವನ್ನು ದೇವರತ್ತ ಎತ್ತು ನಿನ್ನ ಕರಗಳನ್ನು.</verse>
				<verse number="14">ನಿನ್ನ ಕೈಯಿಂದ ದೂರವಿರಲಿ ಅಕ್ರಮ ನಿನ್ನ ಗುಡಾರದಲಿ ನೆಲಸದಿರಲಿ ಅನ್ಯಾಯ.</verse>
				<verse number="15">ಆಗ ಮಾತ್ರ ನೀನು ತಲೆಯೆತ್ತಬಲ್ಲೆ ಗೌರವದಿಂದ ಸ್ಥಿರಚಿತ್ತನಾಗಿರಬಲ್ಲೆ ನಿರ್ಭಯದಿಂದ.</verse>
				<verse number="16">ಮರೆತುಬಿಡುವೆ ಆಗ ನಿನ್ನ ಕಷ್ಟದುಃಖವನ್ನು ನಿನ್ನ ನೆನಪಿಗೆ ಅದು ಹರಿದುಹೋದ ನೀರು.</verse>
				<verse number="17">ಆಗ ನಿನ್ನ ಬಾಳು ನಡುಹಗಲಿಗಿಂತ ಪ್ರಜ್ವಲ ಕತ್ತಲು ಕೂಡ ಪ್ರಾತಃಕಾಲದಂತೆ ಉಜ್ವಲ!</verse>
				<verse number="18">ನಂಬಿಕೆಯಿಂದಿರುವುದರಿಂದ ಧೈರ್ಯದಿಂದಿರುವೆ ಸುತ್ತಲು ಸುರಕ್ಷಿತನಾಗಿ ನೆಮ್ಮದಿಯಿಂದ ಮಲಗುವೆ.</verse>
				<verse number="19">ಆಗ ನೀನು ವಿಶ್ರಮಿಸುವೆ ಹೆದರಿಕೆಯಿಲ್ಲದೆ ಅನೇಕರಿಗೆ ಬೇಕಾಗುವುದು ನಿನ್ನ ಮುಖಪ್ರಸನ್ನತೆ.</verse>
				<verse number="20">ದುರ್ಜನರು ನಿರಾಶೆಯಿಂದ ಕಂಗೆಡುವರು ಪ್ರಾಣಬಿಡಬೇಕೆಂಬುದೇ ಅವರ ಆಶೆಯಾಗಿರುವುದು.”</verse>
			</chapter>
			<chapter number="12">
				<verse number="1">ಅದಕ್ಕೆ ಯೋಬನು ಪ್ರತ್ಯುತ್ತರವಾಗಿ ಹೀಗೆಂದನು:</verse>
				<verse number="2">:ಹೌದ್ಹೌದು ನೀವೇ ಮಹಾಜನ, ನಿಮ್ಮೊಡನೆಯೇ ಸಾಯುವುದು ಸುಜ್ಞಾನ!</verse>
				<verse number="3">ನಿಮ್ಮ ಹಾಗೆ ನಾನೂ ಬಲ್ಲವ ನಿಮಗಿಂತ ನಾನೇನೂ ಕೀಳಲ್ಲ. ಇದು ಯಾರಿಗೆ ತಾನೆ ತಿಳಿದಿಲ್ಲ?</verse>
				<verse number="4">ನೀತಿವಂತನೂ ನಿರ್ದೋಷಿಯೂ ಆದ ನಾನು ದೇವರನ್ನು ಪ್ರಾರ್ಥಿಸಿ ಪ್ರತ್ಯುತ್ತರಕ್ಕಾಗಿ ಕಾದಿರಲು ಗೆಳೆಯರ ಗೇಲಿಪರಿಹಾಸ್ಯಕೆ ಗುರಿಯಾದೆನು.</verse>
				<verse number="5">ದಲಿತರನ್ನು ಕಂಡರೆ ಸುಖಜೀವಿಗಳಿಗೆ ತಾತ್ಸಾರ ಜಾರಿ ಬೀಳಲಿರುವವರಿಗೆ ಕಾದಿದೆ ತಿರಸ್ಕಾರ.</verse>
				<verse number="6">ಸಮೃದ್ಧಿಯಾಗಿವೆ ಕಳ್ಳಕಾಕರ ಗುಡಾರಗಳು ಸುರಕ್ಷಿತವಾಗಿರುವರು ದೇವರನ್ನೆ ಕೆರಳಿಸುವವರು ಅಂಗೈಯಲ್ಲಿರುವುದೇ ಅವರಿಗೆ ದೇವರು!</verse>
				<verse number="7">ಮೃಗಗಳನ್ನು ಬೇಕಾದರೆ ಕೇಳು, ಅವು ಕಲಿಸುವುವು ಆಕಾಶದ ಪಕ್ಷಿಗಳನ್ನು ಕೇಳು, ಅವು ತಿಳಿಸುವುವು.</verse>
				<verse number="8">ಕ್ರಿಮಿಕೀಟಗಳನ್ನು ಕೇಳು, ಅವು ನಿನಗೆ ಬೋಧಿಸುವುವು ಸಮುದ್ರದ ಮೀನುಗಳು ನಿನಗೆ ಉಪದೇಶ ಮಾಡುವುವು.</verse>
				<verse number="9">ಇವುಗಳೆಲ್ಲವನ್ನು ಮಾಡಿದ್ದು ಸರ್ವೇಶ್ವರನ ಕೈಯೇ ಇದು ತಿಳಿಯದಿರುವುದು ಯಾರಿಗೆ ತಾನೆ?</verse>
				<verse number="10">ಆತನ ಕೈಯಲ್ಲಿದೆ ಎಲ್ಲ ಜೀವಿಗಳ ಪ್ರಾಣ ಪ್ರತಿಯೊಬ್ಬ ನರಮಾನವನ ಶ್ವಾಸ.</verse>
				<verse number="11">ನಾಲಿಗೆ ರುಚಿನೋಡುವಂತೆಯೆ ಕಿವಿ ನುಡಿಯನು ವಿವೇಚಿಸುತ್ತದೆ.</verse>
				<verse number="12">ಜ್ಞಾನವಿದೆ ವಯೋವೃದ್ಧರಲ್ಲಿ ವಿವೇಕವಿದೆ ದೀರ್ಘಾಯುಷ್ಯರಲ್ಲಿ.</verse>
				<verse number="13">ಆದರೆ ದೇವರಲ್ಲಿದೆ ಜ್ಞಾನದೊಡನೆ ಶಕ್ತಿಕೂಡ ಆತನಲ್ಲಿದೆ ವಿವೇಕ ಮತ್ತು ಸನ್ಮತಿ ಸಹ.</verse>
				<verse number="14">ಆತ ಕೆಡವಿದ್ದನ್ನು ಯಾರಿಂದಲೂ ಕಟ್ಟಲಾಗದು ಆತ ಸೆರೆಹಿಡಿದವರನ್ನು ಯಾರಿಂದಲೂ ಬಿಡಿಸಲಾಗದು.</verse>
				<verse number="15">ಆತ ನೀರನ್ನು ತಡೆದರೆ, ಬತ್ತಿಹೋಗುತ್ತದೆ ಬೆಳೆಯೆಲ್ಲ ತೂಬೆತ್ತಿದರೆ ಮುಳುಗಿಹೋಗುತ್ತದೆ ಇಳೆಯೆಲ್ಲ.</verse>
				<verse number="16">ಸಾಮರ್ಥ್ಯ ಹಾಗು ವಿಜಯ ಆತನ ಲಕ್ಷಣ ವಂಚಕ ಹಾಗು ವಂಚಿತ ಆತನಿಗೆ ಅಧೀನ.</verse>
				<verse number="17">ಮಂತ್ರಿಗಳನು ಬರಿಬತ್ತಲೆಯಾಗಿ ನಡೆಸುತ್ತಾನೆ ನ್ಯಾಯಾಧಿಪತಿಗಳನು ಮೂರ್ಖರನ್ನಾಗಿಸುತ್ತಾನೆ.</verse>
				<verse number="18">ಅರಸರು ಹಾಕಿದ ಬಂಧನವನ್ನು ಬಿಚ್ಚಿ ಬಿಗಿಯುತ್ತಾನೆ ಅವರ ಸೊಂಟಕ್ಕೆ ಚಿಂದಿ.</verse>
				<verse number="19">ಯಾಜಕರನ್ನು ಬರಿಬತ್ತಲೆಯಾಗಿ ನಡೆಸುತ್ತಾನೆ ಅಚಲ ಶಕ್ತಿಶಾಲಿಗಳನ್ನು ಕೆಡವಿಬಿಡುತ್ತಾನೆ.</verse>
				<verse number="20">ಮೂಕರನ್ನಾಗಿಸುತ್ತಾನೆ ವಾಕ್ ಚತುರರನ್ನು ಹಿರಿಯರ ಧೀಮಂತಿಕೆಯನ್ನು ತೆಗೆದುಬಿಡುತ್ತಾನೆ.</verse>
				<verse number="21">ಅಧಿಪತಿಗಳಿಗೆ ಉಂಟುಮಾಡುತ್ತಾನೆ ಅವಮಾನವನ್ನು ಬಿಚ್ಚಿಬಿಡುತ್ತಾನೆ ಬಲಾಢ್ಯರ ನಡುಕಟ್ಟನ್ನು.</verse>
				<verse number="22">ಇರುಳಿನ ಆಳದಲ್ಲಿರುವವುಗಳನ್ನು ಬೆಳಗಿಸುತ್ತಾನೆ ಗಾಢಾಂಧಕಾರವನ್ನು ಪ್ರಕಾಶಗೊಳಿಸುತ್ತಾನೆ.</verse>
				<verse number="23">ರಾಷ್ಟ್ರಗಳನ್ನು ಬೆಳೆಸುತ್ತಾನೆ, ಅಳಿಸುತ್ತಾನೆ ಅವುಗಳನ್ನು ಹರಡುತ್ತಾನೆ, ಹೊರದೂಡುತ್ತಾನೆ.</verse>
				<verse number="24">ಭೂಪತಿಗಳನ್ನು ಬುದ್ಧಿಹೀನರನ್ನಾಗಿಸುತ್ತಾನೆ ದಾರಿಕಾಣದ ಅರಣ್ಯದಲಿ ಅಲೆದಾಡಿಸುತ್ತಾನೆ.</verse>
				<verse number="25">ಅಂಥವರು ಕತ್ತಲೊಳು ತಡಕಾಡುವರು ಬೆಳಕಿಲ್ಲದೆ ತಡವರಿಸುವರು ಕುಡಿದು ಅಮಲೇರಿದವರಂತೆ.”</verse>
			</chapter>
			<chapter number="13">
				<verse number="1">“ಇವೆಲ್ಲವನ್ನು ನನ್ನ ಕಣ್ಣುಗಳು ಕಂಡಿವೆ. ಕಿವಿಗಳು ಕೇಳಿ ಗ್ರಹಿಸಿಕೊಂಡಿವೆ.</verse>
				<verse number="2">ನೀವು ತಿಳಿದಿರುವುದನ್ನು ನಾನೂ ತಿಳಿದವ ನಿಮಗಿಂತ ನಾನು ಕೀಳೇನೂ ಅಲ್ಲ.</verse>
				<verse number="3">ಸರ್ವಶಕ್ತನೊಡನೆ ಮಾತಾಡಲು ನನಗಿದೆ ಆಸೆ ದೇವರೊಂದಿಗೆ ವಾದಿಸಲು ನನಗಿದೆ ಅಪೇಕ್ಷೆ.</verse>
				<verse number="4">ನೀವು ಸುಳ್ಳಿಗೆ ಸುಣ್ಣ ಬಳಿಯುವವರು ನೀವೆಲ್ಲರು ಏತಕ್ಕೂ ಬಾರದ ವೈದ್ಯರು.</verse>
				<verse number="5">ನೀವು ಸುಮ್ಮನಿದ್ದರೆ ಚೆನ್ನ ಮೌನವೇ ನಿಮಗೆ ಉತ್ತಮ.</verse>
				<verse number="6">ಈಗ ಕೇಳಿ ನನ್ನ ವಾದವನ್ನು ಆಲಿಸಿರೀಗ ನನ್ನ ತರ್ಕವನ್ನು.</verse>
				<verse number="7">ದೇವರ ಪಕ್ಷ ವಹಿಸಿ ನೀವು ಅನ್ಯಾಯ ನುಡಿಯುವಿರೋ? ಅವರಿಗೋಸ್ಕರ ಕಪಟ ಮಾತಾಡುವಿರೋ?</verse>
				<verse number="8">ಅವರಿಗೆ ಮುಖದಾಕ್ಷಿಣ್ಯ ತೋರುವಿರೋ? ದೇವರ ಪರವಾಗಿ ನೀವು ವಾದಿಸುವಿರೋ?</verse>
				<verse number="9">ದೇವರು ನಿಮ್ಮನ್ನು ಪರಿಶೋಧಿಸಿದರೆ ನಿಮಗೆ ಒಳಿತೆ? ಮನುಷ್ಯರಂತೆ ಆತನನ್ನು ಮೋಸಗೊಳಿಸಲಾದೀತೆ?</verse>
				<verse number="10">ನೀವು ಗುಟ್ಟಾಗಿ ಪಕ್ಷಪಾತಮಾಡಿದರೂ ಆತ ನಿಮ್ಮನ್ನು ಖಂಡಿಸದೆ ಬಿಡನು.</verse>
				<verse number="11">ಆತನ ಪ್ರತಿಭೆ ನಿಮ್ಮನ್ನು ಹೆದರಿಸದೋ? ದೈವಭಯವು ನಿಮ್ಮನ್ನು ಆವರಿಸದೋ?</verse>
				<verse number="12">ನಿಮ್ಮ ಸ್ಮೃತಿಗಳು ಬೂದಿಯ ಸಾಮತಿಗಳು ನಿಮ್ಮ ವಾದಗಳು ಮಣ್ಣಿನ ಗೋಡೆಗಳು.</verse>
				<verse number="13">ಸುಮ್ಮನಿರಿ, ನನ್ನನ್ನು ಮಾತಾಡಲು ಬಿಡಿ ನನ್ನ ಮೇಲೆ ಏನು ಬೇಕಾದರೂ ಬರಲಿ.</verse>
				<verse number="14">ಪ್ರಾಣವನ್ನು ನಾನು ಕಚ್ಚಿಕೊಂಡಿದ್ದೇನೆ ಬಾಯಲಿ ಜೀವವನ್ನು ನಾನು ಹಿಡಿದುಕೊಂಡಿದ್ದೇನೆ ಕೈಯಲಿ.</verse>
				<verse number="15">ಇಗೋ, ದೇವರು ಕೊಲ್ಲುವನೆನ್ನನು ಅದಕ್ಕಾಗಿ ನಾನು ಕಾದಿರುವೆನು. ಆದರೂ ನನ್ನ ನಡತೆ ಸರಿಯೆಂಬುದನು ಆತನ ಮುಂದೆಯೆ ರುಜುವಾತುಪಡಿಸುವೆನು.</verse>
				<verse number="16">ಭಕ್ತಿಹೀನನು ಆತನ ಮುಂದೆ ಬರಲಾರ ನಾನು ಉದ್ಧಾರವಾಗುವೆನೆಂಬುದಕ್ಕೆ ಇದೇ ಆಧಾರ.</verse>
				<verse number="17">ಕೇಳಿ, ನನ್ನ ಮಾತನ್ನು ಲಕ್ಷ್ಯವಿಟ್ಟು ನನ್ನ ಅರಿಕೆಯನ್ನು ಕಿವಿಗೊಟ್ಟು.</verse>
				<verse number="18">ಇಗೋ ನನ್ನ ಮೊಕದ್ದಮೆಯನ್ನು ಸಿದ್ಧಗೊಳಿಸಲಾಗಿದೆ ನಾನು ನಿರ್ದೋಷಿಯೆಂಬ ನಿರ್ಣಯ ನನಗೆ ಗೊತ್ತೇ ಇದೆ.</verse>
				<verse number="19">ದೇವಾ, ನನ್ನ ಮೇಲೆ ಆಪಾದನೆ ಹೊರಿಸಲು ಬರುವೆಯಾ? ಹಾಗಾದರೆ ಮೌನತಾಳಿ ನಾ ಮಾಡುವೆ ಪ್ರಾಣತ್ಯಾಗ.</verse>
				<verse number="20">ನನ್ನೆರಡು ಕೋರಿಕೆಗಳನ್ನು ಈಡೇರಿಸಯ್ಯಾ ಆಗ ನಿನ್ನ ದೃಷ್ಟಿಗೆ ನಾನು ಮರೆಮಾಡಿಕೊಳ್ಳಲಾರೆನಯ್ಯಾ.</verse>
				<verse number="21">ಹಿಂತೆಗೆದುಕೊ ನನ್ನ ಮೇಲೆತ್ತಿರುವ ನಿನ್ನ ಕೈಗಳನು ಅಂಜಿಕೆಗೀಡು ಮಾಡದಿರಲಿ ನಿನ್ನ ದಿಗಿಲು ನನ್ನನು.</verse>
				<verse number="22">ಆ ಬಳಿಕ ನೀನು ಕರೆದರೆ ನಾನು ಉತ್ತರಕೊಡುವೆ ಇಲ್ಲವೆ, ನಾನು ಮಾತಾಡಿದರೆ ನೀನೆ ಉತ್ತರಿಸುವೆ.</verse>
				<verse number="23">ನನ್ನ ಅಕ್ರಮಗಳೆಷ್ಟು? ಪಾಪಗಳೆಷ್ಟು? ನನ್ನ ಪಾಪದೋಷಗಳನ್ನು ತಿಳಿಯಪಡಿಸು.</verse>
				<verse number="24">ನೀನೇಕೆ ನನಗೆ ವಿಮುಖನಾಗಿರುವೆ? ನನ್ನನ್ನೇಕೆ ಶತ್ರು ಎಂದೆಣಿಸುವೆ?</verse>
				<verse number="25">ಗಾಳಿಗೆ ತೂರುವ ತರಗೆಲೆಯನ್ನು ಬೆದರಿಸುವೆಯಾ? ಒಣಗಿದ ಹೊಟ್ಟನ್ನು ಬೆನ್ನಟ್ಟಿಹೋಗುವೆಯಾ?</verse>
				<verse number="26">ನನ್ನ ವಿಷಯವಾಗಿ ಕಹಿಯಾದ ತೀರ್ಪನು ಬರೆದಿರುವೆ ಯೌವನದ ಪಾಪಪರಿಣಾಮಗಳನು ನನ್ನ ಮೇಲೆ ಹೊರಿಸಿರುವೆ.</verse>
				<verse number="27">ನನ್ನ ಕಾಲುಗಳಿಗೆ ನೀ ಕೋಳವನ್ನು ತೊಡಿಸಿರುವೆ ನನ್ನ ನಡತೆಯನು ದಿಟ್ಟಿಸಿ ನೋಡುತ್ತಿರುವೆ ನನ್ನ ಹೆಜ್ಜೆ ಹೆಜ್ಜೆಯನು ಲೆಕ್ಕಿಸುತ್ತಿರುವೆ.</verse>
				<verse number="28">ಕೊಳೆತ ಪದಾರ್ಥದಂತೆ, ನುಸಿಹಿಡಿದ ಬಟ್ಟೆಯಂತೆ ನಾನು ಕ್ಷಯಿಸಿ ಹೋಗುತ್ತಿರುವೆ.”</verse>
			</chapter>
			<chapter number="14">
				<verse number="1">“ಹೆಣ್ಣಿನಿಂದ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನು, ದುಃಖಭರಿತನು.</verse>
				<verse number="2">ಅರಳಿ ಬಾಡುವನು ಹೂವಿನಂತೆ ನಿಲ್ಲದೆ ಓಡುವನು ನೆರಳಿನಂತೆ.</verse>
				<verse number="3">ಇಂಥವನಾದ ನನ್ನ ಮೇಲೆ ಕಣ್ಣಿಟ್ಟು ಬರಮಾಡುವೆಯಾ ನನ್ನನು ನಿನ್ನ ನ್ಯಾಯಸ್ಥಾನಕ್ಕೆ?</verse>
				<verse number="4">ಅಶುದ್ಧತೆಯಿಂದ ಬಂದೀತೆ ಶುದ್ಧತೆ? ಇಲ್ಲ, ಎಂದಿಗೂ ಅದು ಅಸಾಧ್ಯವೆ.</verse>
				<verse number="5">ಮಾನವನ ದಿನಗಳೆಷ್ಟೆಂದು ತೀರ್ಮಾನವಾಗಿದೆ ಅವನ ತಿಂಗಳುಗಳ ಲೆಕ್ಕ ನಿನಗೆ ಗೊತ್ತಿದೆ ನೀ ನೇಮಿಸಿರುವೆ ಅವನಿಗೆ ದಾಟಲಾಗದ ಗಡಿಗಳನೆ.</verse>
				<verse number="6">ಇಂತಿರಲು ತಿರುಗಿಸಿಬಿಡು ಅವನಿಂದ ನಿನ್ನ ದೃಷ್ಟಿಯನು ಸವಿಯಲು ಬಿಡು ಕೂಲಿಯಾಳಂತೆ ದಿನಾಂತ್ಯದ ನಲಿವನು.</verse>
				<verse number="7">ಮತ್ತೆ ಮೊಳೆಯುವೆನೆಂಬ, ಮರಳಿ ಚಿಗುರುವೆನೆಂಬ ನಂಬಿಕೆಯಿಂದಿದೆ ಅಲ್ಲವೆ ಕಡಿದ ವಟವೃಕ್ಷ?</verse>
				<verse number="8">ಮರದ ಬೇರು ನೆಲದಲ್ಲಿ ಮುದಿಯಾಗಿದ್ದರೂ ಅದರ ಬುಡ ಮಣ್ಣಿನಲ್ಲಿ ಸತ್ತಿದ್ದರೂ</verse>
				<verse number="9">ಮಳೆ ವಾಸನೆಯಿಂದಲೆ ಅದು ಮೊಳೆಯುವುದು ಗಿಡದ ಹಾಗೆ ಅದು ಕವಲೊಡೆದುಕೊಳ್ಳುವುದು.</verse>
				<verse number="10">ಮನುಜನೋ ಬಿದ್ದಿರುತ್ತಾನೆ ಸತ್ತು ಕೊನೆಯುಸಿರೆಳೆದಾಗ ಎಲ್ಲವು ಮುಗಿಯಿತು.</verse>
				<verse number="11">ಸರೋವರದ ನೀರು ಆರಿಹೋಗುವಂತೆ ನದಿಗಳು ಬತ್ತಿಹೋಗುವಂತೆ</verse>
				<verse number="12">ಸತ್ತು ಮಲಗಿದ ಮನುಜ ಏಳುವಂತಿಲ್ಲ. ಅಳಿದುಹೋದರೂ ಆಕಾಶಮಂಡಲ ಅವನು ಎಚ್ಚರಗೊಳ್ಳುವುದಿಲ್ಲ, ಎಬ್ಬಿಸಲ್ಪಡುವುದಿಲ್ಲ.</verse>
				<verse number="13">ಆಹಾ! ಬಚ್ಚಿಡಲಾರೆಯಾ ನನ್ನನ್ನು ಪಾತಾಳದೊಳಗೆ? ಅಲ್ಲಿ ಮರೆಮಾಚಿಡಲಾರೆಯಾ ನಿನ್ನ ಕೋಪ ಇಳಿಯುವವರೆಗೆ? ಕಾಲವನ್ನು ಗೊತ್ತುಮಾಡಲಾರೆಯಾ ನನ್ನನು ನೆನೆಯುವುದಕೆ?</verse>
				<verse number="14">ಸತ್ತಮೇಲೆ ಮನುಜ ಮರಳಿ ಬದುಕುತ್ತಾನೆಯೇ? ಬದುಕುವುದಾದರೆ ಮುಕ್ತಿಹೊಂದುವವರೆಗೆ ನನ್ನ ವಾಯಿದೆಯ ದಿನವೆಲ್ಲ ನಾ ಕಾದಿರುವೆ.</verse>
				<verse number="15">ಆಗ ನೀನು ಕರೆದರೆ ನಾನು ಉತ್ತರಕೊಡುವೆ ನಿನ್ನ ಈ ಸೃಷ್ಟಿಯ ಮೇಲೆ ಹುಟ್ಟೀತು ನಿನಗೆ ಮಮತೆ!</verse>
				<verse number="16">ಆಗ ನನ್ನ ಹೆಜ್ಜೆಹೆಜ್ಜೆಗಳನು ನೀ ಲೆಕ್ಕಿಸುವೆ ನನ್ನ ಪಾಪ ಹುಡುಕಲು ನೀ ಕಾವಲು ಇಡಲಾರೆ.</verse>
				<verse number="17">ಆಗ ನನ್ನ ದ್ರೋಹವನ್ನೆಲ್ಲ ಮೂಟೆಕಟ್ಟಿ ಮೂಲೆಗೆ ಹಾಕುವೆ ನನ್ನ ದೋಷವನ್ನು ಮುಚ್ಚಿ, ನೀ ಮರೆಮಾಡುವೆ.</verse>
				<verse number="18">ಆದರೆ ಬೆಟ್ಟ ಕದಡಿ ಕರಗುವಂತೆ ಬಂಡೆ ತನ್ನ ಸ್ಥಳದಿಂದ ಜಾರುವಂತೆ.</verse>
				<verse number="19">ಕಲ್ಲುಗಳನ್ನು ನೀರು ಸವೆಸುವಂತೆ ನೆಲದ ಮಣ್ಣನು ಪ್ರವಾಹ ಕೊಚ್ಚುವಂತೆ ಭಂಗವಾಗುವುದು ಮಾನವನ ನಿರೀಕ್ಷೆ.</verse>
				<verse number="20">ನೀನು ಅವನನ್ನು ಶಾಶ್ವತವಾಗಿ ಸೋಲಿಸಿಬಿಡುವೆ ಅವನು ಗತಿಸಿಹೋಗುವನು. ಅವನನ್ನು ವಿಕಾರಗೊಳಿಸಿ ತೊಲಗಿಸಿಬಿಡುವೆ.</verse>
				<verse number="21">ಅವನ ಮಕ್ಕಳು ಪ್ರಗತಿಹೊಂದಿದರೂ ಅವನಿಗೆ ತಿಳಿಯದು ಅವರು ಅಧೋಗತಿಗೆ ಇಳಿದರೂ ಅವನಿಗೆ ಗೋಚರವಾಗದು.</verse>
				<verse number="22">ಅವನು ಅನುಭವಿಸುವುದು ತನ್ನ ದೇಹದ ನೋವನ್ನೇ ಅವನು ಅತ್ತು ಪ್ರಲಾಪಿಸುವುದು ತನಗಾಗಿಯೇ.”</verse>
			</chapter>
			<chapter number="15">
				<verse number="1">ಆಗ ತೇಮಾನ್ಯನಾದ ಎಲೀಫಜನು ಮತ್ತೆ ಹೀಗೆಂದು ಹೇಳಿದನು:</verse>
				<verse number="2">“ಬುದ್ಧಿವಂತನು ಗಾಳಿಮಾತನ್ನಾಡುವುದು ಸರಿಯೆ? ಸುಡುಗಾಳಿಯಿಂದ ಹೊಟ್ಟೆ ತುಂಬಿಸಿಕೊಳ್ಳಬಹುದೇ?</verse>
				<verse number="3">ಅಂಥವನು ನಿಷ್ಪ್ರಯೋಜಕವಾಗಿ ವಾದಿಸುತ್ತಾನೆಯೆ? ನಿರರ್ಥಕವಾಗಿ ವ್ಯಾಜ್ಯವಾಡುತ್ತಾನೆಯೆ?</verse>
				<verse number="4">ನೀನಾದರೋ ದೇವರ ಭಯಭಕ್ತಿಯನ್ನು ಕೆಡಿಸುತ್ತಿರುವೆ ದೇವರ ಧ್ಯಾನಕ್ಕೆ ಅಡ್ಡಿಬರುತ್ತಿರುವೆ.</verse>
				<verse number="5">ನಿನ್ನ ಪಾಪವೆ ನಿನಗೆ ಮಾತನು ಕಲಿಸಿಕೊಟ್ಟಿದೆ ಕಪಟಿಗಳಾಡುವ ನುಡಿಯನೆ ನೀನು ಆರಿಸಿಕೊಂಡಿರುವೆ.</verse>
				<verse number="6">ನಾನಲ್ಲ, ನಿನ್ನ ಬಾಯೇ, ನಿನ್ನನು ಅಪರಾಧಿಯನ್ನಾಗಿಸುತ್ತಿದೆ ನಿನ್ನ ತುಟಿಗಳೇ ನಿನಗೆ ವಿರುದ್ಧ ಸಾಕ್ಷಿಕೊಡುತ್ತಿವೆ.</verse>
				<verse number="7">ನೀನು ಮನುಜರಿಗೆಲ್ಲ ಆದಿಪುರುಷನೋ? ಬೆಟ್ಟಗಳಿಗಿಂತ ಮುಂಚಿತವಾಗಿ ಹುಟ್ಟಿದವನೋ?</verse>
				<verse number="8">ದೇವರ ಆಲೋಚನಾಸಭೆಯಲಿ ನೀನು ಭಾಗವಹಿಸಿದ್ದೆಯೋ? ಜ್ಞಾನವೆಂಬುದು ನಿನಗೆ ಮಾತ್ರ ಮೀಸಲೋ?</verse>
				<verse number="9">ನಮಗೆ ತಿಳಿಯದಿರುವುದು ನಿನಗೆ ತಿಳಿದಿದೆಯೆ? ನಮಗೆ ಅರ್ಥವಾಗದಿರುವುದು ನಿನಗೆ ಅರ್ಥವಾಗಿದೆಯೆ?</verse>
				<verse number="10">ನಮ್ಮಲ್ಲಿದ್ದಾರೆ ತಲೆ ನರೆತವರು, ವಯೋವೃದ್ಧರು ನಿಮ್ಮಪ್ಪನಿಗಿಂತಲೂ ಹೆಚ್ಚು ಮುದುಕರಾದವರು.</verse>
				<verse number="11">ಕೇವಲವಾಯಿತೋ ನಿನಗೆ ದೇವರಿತ್ತ ಸಾಂತ್ವನ? ನಿನಗೆ ದೊರೆತ ಮೃದುವಾದ ಹಿತವಚನ?</verse>
				<verse number="12">ನಿನ್ನ ಹೃದಯ ನಿನ್ನನ್ನು ದೂರ ಒಯ್ದಿದೆ, ಏಕೆ? ನಿನ್ನ ಕಣ್ಣು ಕಿಡಿಕಾರುತ್ತಿದೆ ಏಕೆ?</verse>
				<verse number="13">ದೇವರಿಗೆ ವಿರುದ್ಧ ಕುದಿಯುತ್ತಿರುವೆ ಏಕೆ? ಬಾಯಿಂದ ಮಾತು ಹರಿಯುತ್ತಿವೆ ಏಕೆ?</verse>
				<verse number="14">ನರನು ಎಷ್ಟರವನು? ಅವನು ಪರಿಶುದ್ಧನಿರಲು ಸಾಧ್ಯವೆ? ಸ್ತ್ರೀಯರಲ್ಲಿ ಹುಟ್ಟಿದವನು ನೀತಿವಂತನಾಗಿರಬಹುದೆ?</verse>
				<verse number="15">ದೇವರಿಗೋ, ತನ್ನ ದೂತರಲ್ಲೂ ನಂಬಿಕೆಯಿಲ್ಲ ಆಕಾಶವೂ ಆತನ ದೃಷ್ಟಿಯಲ್ಲಿ ನಿರ್ಮಲವಲ್ಲ.</verse>
				<verse number="16">ಇಂತಿರಲು, ಮತ್ತಷ್ಟೂ ಮಲಿನನಲ್ಲವೆ ನರಮಾನವನು? ಅಸಹ್ಯನು, ಅಕ್ರಮಿಯು, ಕೇಡನ್ನು ನೀರಿನಂತೆ ಕುಡಿಯುವವನು?</verse>
				<verse number="17">ಕೇಳು ನಾನು ತಿಳಿಸುವ ಈ ಸಂಗತಿಯನು ನಾನು ಕಂಡದ್ದನ್ನೇ ನಿನಗೆ ವಿವರಿಸುವೆನು:</verse>
				<verse number="18">ಜ್ಞಾನಿಗಳು ತಮ್ಮ ಪೂರ್ವಜರಿಂದ ಕಲಿತಿದ್ದನು ಮುಚ್ಚುಮರೆಯಿಲ್ಲದೆ ಪ್ರಕಟಿಸಿದವುಗಳನು ಕೇಳು - ನಾನು ನಿನಗೆ ತಿಳಿಸುವೆನು:</verse>
				<verse number="19">ಅವರು ತಮ್ಮ ನಾಡಿನ ಬಾಧ್ಯತೆಯನ್ನು ಕಳೆದುಕೊಂಡವರಲ್ಲ ಪರದೇಶೀಯರು ಅವರ ಮಧ್ಯೆ ಹಾದುಹೋಗುವಂತಿರಲಿಲ್ಲ.</verse>
				<verse number="20">ಹಿಂಸಾತ್ಮಕನ ವರುಷಗಳು ಎಣಿಸಲಾಗಿವೆ ಆ ದುಷ್ಟನು ಜೀವಮಾನವೆಲ್ಲ ಬಾಧೆಪೀಡಿತನೆ.</verse>
				<verse number="21">ಭಯಹುಟ್ಟಿಸುವ ಅಪಾಯಗಳ ಸಪ್ಪಳ ಅವನ ಕಿವಿಯಲ್ಲಿ ಸೂರೆಗಾರನ ಧಾಳಿಯ ದಿಗಿಲು ಅವನು ಸುಖವಿರುವಲ್ಲಿ.</verse>
				<verse number="22">ಕತ್ತಲಿಂದ ಹಿಂದಿರುಗುವ ನಂಬಿಕೆ ಅವನಿಗಿಲ್ಲ ಕತ್ತಿ ತನಗಾಗಿ ಕಾದಿದೆಯೆಂಬುದರಲ್ಲಿ ಸಂದೇಹವಿಲ್ಲ.</verse>
				<verse number="23">ಹೊಟ್ಟೆಪಾಡಿಗಾಗಿ ಹುಡುಕುತ್ತಾ ಅಲೆದಾಡುತ್ತಾನೆ ಆ ಕತ್ತಲ ದಿನ ಹತ್ತಿರವಿದೆಯೆಂದು ಅರಿತಿದ್ದಾನೆ.</verse>
				<verse number="24">ಸಂಕಟ - ಪೇಚಾಟ ಅವನನ್ನು ಕಾಡುತ್ತಿರುತ್ತವೆ ಯುದ್ಧಸನ್ನದ್ಧ ರಾಜರಂತೆ ಅವನಿಗೆ ಸೋಲನು ತರುತ್ತವೆ.</verse>
				<verse number="25">ದೇವರಿಗೆ ವಿರುದ್ಧ ಅವನು ಮುಷ್ಠಿ ತೋರಿದನಲ್ಲವೆ? ಸರ್ವಶಕ್ತನನು ಧಿಕ್ಕರಿಸುತಾ ಶೂರನಂತೆ ಮೆರೆದನಲ್ಲವೆ?</verse>
				<verse number="26">ಗಟ್ಟಿಮುಟ್ಟಾದ ಗುರಾಣಿಯನ್ನು ಹಿಡಿದುಕೊಂಡೇ ಆತನ ಮೇಲೆ ಬೀಳಲು ತಲೆ ನಿಮಿರಿ ಓಡಿದನಲ್ಲವೆ?</verse>
				<verse number="27">ಕೊಬ್ಬೇರಿತ್ತು ಅವನ ಮೋರೆಯಲಿ ಬೊಜ್ಜು ಬೆಳೆದಿತ್ತು ಅವನ ಸೊಂಟದಲಿ.</verse>
				<verse number="28">ಹಾಳುಮಾಡಿದ್ದ ಪಟ್ಟಣಗಳಲ್ಲೆ ಅವನು ಸೇರಿಕೊಂಡಿದ್ದ ಯಾರೂ ವಾಸಮಾಡದೆ ದಿಬ್ಬವಾಗಿ ಮಾರ್ಪಟ್ಟಿದ್ದ ಶಾಪಗ್ರಸ್ತ ಮನೆಗಳಲ್ಲಿ ವಾಸಮಾಡಿಕೊಂಡಿದ್ದ.</verse>
				<verse number="29">ಇಂಥವನು ಸಿರಿವಂತನಾಗಿ ಉಳಿಯನು ಅವನ ಆಸ್ತಿ ಸ್ಥಿರವಾಗಿ ನಿಲ್ಲದು ಅವನು ಧರೆಯಲ್ಲಿ ಬೇರೂರಿ ಬೆಳೆಯನು.</verse>
				<verse number="30">ಕತ್ತಲೊಳಗಿಂದ ಪಾರಾಗನವನು ಸುಡುವುದು ಕಿಚ್ಚು ಅವನ ಕೊಂಬೆಯನು ಬಡಿದೊಯ್ಯುವುದು ಗಾಳಿ ಅದರ ಫಲವನು.</verse>
				<verse number="31">ವ್ಯರ್ಥವಾದುದನು ನಂಬಿ ಅವನು ಮೋಸಹೋಗದಿರಲಿ ಇಲ್ಲವಾದರೆ ಅವನಿಗೆ ಸಿಗುವ ಪ್ರತಿಫಲ ವ್ಯರ್ಥವೇ ಸರಿ.</verse>
				<verse number="32">ಅವನ ಬುಡ ಒಣಗುವುದು ಕಾಲಕ್ಕೆ ಮುಂಚೆ ಪಚ್ಚೆಪಸಿರಾಗದು ಅವನ ಕೊಂಬೆ.</verse>
				<verse number="33">ಅವನಾಗುವನು ಮಾಗದ ಹಣ್ಣನ್ನು ಕಳೆದುಕೊಂಡ ದ್ರಾಕ್ಷಿಬಳ್ಳಿಯಂತೆ ಹೂಗಳನ್ನು ಉದುರಿಸಿಕೊಂಡ ಓಲಿವ್ ಎಣ್ಣೆ ಮರದಂತೆ.</verse>
				<verse number="34">ದುರುಳರ ಸಂಘವದು ಬರಡಾದುದು ಸುಡುವುದು ಬೆಂಕಿ ಲಂಚಕೋರರ ಗುಡಾರವನು.</verse>
				<verse number="35">ಉದರದಲ್ಲಿ ವಂಚನೆಯನ್ನು ಗರ್ಭಧರಿಸುವರು ಕೇಡನು ಹಡೆವೆನೆಂದೆಣಿಸಿ ಶೂನ್ಯವ ಹೆರುವುದ ನೋಡು.</verse>
			</chapter>
			<chapter number="16">
				<verse number="1">ಆಗ ಯೋಬನು ಕೊಟ್ಟ ಉತ್ತರ:</verse>
				<verse number="2">“ಇಂಥ ಎಷ್ಟೋ ಮಾತುಗಳನ್ನು ಕೇಳಿದ್ದೇನೆ ನೀವೆಲ್ಲರು ಆದರಿಸುವವರಲ್ಲ, ಬಾಧಿಸುವವರೇ.</verse>
				<verse number="3">ನಿಮ್ಮ ಗಾಳಿಮಾತುಗಳಿಗೆ ಇತಿಮಿತಿ ಬೇಡವೇನು? ಇಂಥ ಉತ್ತರ ಕೊಡಲು ನಿಮ್ಮನ್ನು ಒತ್ತಾಯಪಡಿಸಿದ್ದೇನು?</verse>
				<verse number="4">ನನ್ನ ಸ್ಥಿತಿಯಲ್ಲಿ ನೀವಿದ್ದಿದ್ದರೆ ನಾನೂ ಮಾತಾಡಬಹುದಿತ್ತು ನಿಮ್ಮಂತೆ. ನಿಮಗೆ ವಿರುದ್ಧ ನಾನೂ ಮಾತೂ ಬೆಳೆಸಬಹುದಿತ್ತು ನಿಮ್ಮ ವಿಷಯದಲ್ಲಿ ನಾನೂ ತಲೆಯಾಡಿಸಬಹುದಿತ್ತು.</verse>
				<verse number="5">ನಾನು ನಿಮಗೆ ಬಾಯಿಮಾತಿನಿಂದ ಧೈರ್ಯ ಹೇಳಬಹುದಿತ್ತು ತುಟಿಮಾತುಗಳಿಂದ ಆದರಿಸಿ ಸಾಂತ್ವನ ನೀಡಬಹುದಿತ್ತು.</verse>
				<verse number="6">ನಾನು ಮಾತಾಡಿದರೆ ನನ್ನ ನೋವು ನಿವಾರಣೆಯಾಗದು ನಾನು ಸುಮ್ಮನಿದ್ದರೆ ನನ್ನ ಕಷ್ಟ ಪರಿಹಾರವಾಗದು.</verse>
				<verse number="7">ದೇವರೇ, ದುಃಖದಿಂದ ನೀ ನನ್ನನ್ನು ಸವೆಸಿರುವೆ ನನ್ನ ಬಂಧುಬಳಗದವರನ್ನು ಸದೆಬಡಿದಿರುವೆ.</verse>
				<verse number="8">ನನ್ನ ಮುಖವೆಲ್ಲ ಸುಕ್ಕುಹಿಡಿದಿದೆ ನನ್ನ ಸಣಕಲುತನವೆ ನನಗೆ ವಿರುದ್ಧ ಸಾಕ್ಷಿಯಾಗಿದೆ.</verse>
				<verse number="9">ದೇವರ ಸಿಟ್ಟು ಸೀಳಿ ಹಾಳುಮಾಡುತ್ತಿದೆ ಆತ ನನ್ನನ್ನು ನೋಡಿ ಹಲ್ಲುಕಡಿದಿದ್ದಾನೆ ನನ್ನ ವೈರಿ ನನ್ನನ್ನು ದುರುಗುಟ್ಟಿ ನೋಡುತ್ತಿದ್ದಾನೆ.</verse>
				<verse number="10">ಜನರು ಬಾಯಿಕಿಸಿದು ನನ್ನನು ಅಣಕಿಸುತ್ತಾರೆ ಛೀಮಾರಿ ಹಾಕಿ ನನ್ನ ದವಡೆಗೆ ಬಡಿದಿದ್ದಾರೆ ನನಗೆ ವಿರುದ್ಧವಾಗಿ ಗುಂಪುಕಟ್ಟಿದ್ದಾರೆ.</verse>
				<verse number="11">ದೇವರು ನನ್ನನ್ನೊಪ್ಪಿಸಿಬಿಟ್ಟಿದ್ದಾನೆ ತುಂಟರಿಗೆ ನನ್ನನ್ನು ಎಸೆದುಬಿಟ್ಟಿದ್ದಾನೆ ದುಷ್ಟರ ಕೈಗೆ.</verse>
				<verse number="12">ನೆಮ್ಮದಿಯಾಗಿದ್ದ ನನ್ನನು ಒಡೆದು ಬಡಿದುಹಾಕಿದ್ದಾನೆ ಕುತ್ತಿಗೆ ಹಿಸುಕಿ ನನ್ನನು ತುಂಡಾಗಿಸಿದ್ದಾನೆ. ಬಾಣಬಿಡಲು ನನ್ನನು ಗುರಿಹಲಗೆಯಾಗಿಸಿಕೊಂಡಿದ್ದಾನೆ.</verse>
				<verse number="13">ಮುತ್ತಿಕೊಂಡಿವೆ ನನ್ನನು ಆತನ ಬಾಣಗಳು ನಿರ್ದಯೆಯಿಂದ ಅಂತರಂಗವನ್ನು ಇರಿಯುತ್ತಿಹನು ನೆಲದ ಮೇಲೆ ನನ್ನ ಪಿತ್ತವನು ಸುರಿಸುತ್ತಿಹನು.</verse>
				<verse number="14">ಪೆಟ್ಟಿನ ಮೇಲೆ ಪೆಟ್ಟು ಕೊಟ್ಟು ನನ್ನನು ಬಡಕಲಾಗಿಸಿಹನು ಯುದ್ಧಶೂರನಂತೆ ಓಡಿಬಂದು ಮೇಲೆ ಬೀಳುತ್ತಿಹನು.</verse>
				<verse number="15">ಗೋಣಿತಟ್ಟನ್ನು ಹೊಲಿದು ಮೈಗೆ ಹಾಕಿಕೊಂಡಿರುವೆ ನನ್ನ ಕೊಂಬನ್ನು ಬೂದಿಯೊಳಗೆ ಬಾಗಿಸಿಟ್ಟಿರುವೆ.</verse>
				<verse number="16">ಕಣ್ಣೀರು ಸುರಿಸಿ ನನ್ನ ಮುಖ ಕೆಂಪೇರಿದೆ ನನ್ನ ಕಣ್ಣುಗಳಿಗೆ ಕಾರಿರುಳು ಕವಿದಿದೆ.</verse>
				<verse number="17">ಆದರೂ ನಾನು ಹಿಂಸಾಚಾರಕ್ಕೆ ಕೈಹಾಕಲಿಲ್ಲ ನಾನು ಮಾಡುವ ಪ್ರಾರ್ಥನೆ ನಿರ್ಮಲ.</verse>
				<verse number="18">ಪೊಡವಿಯೇ, ನನ್ನ ನೆತ್ತರನ್ನು ನೀ ಮುಚ್ಚಬೇಡ ನಾನು ಮಾಡುತ್ತಿರುವ ಮೊರೆಯನ್ನು ನಿಲ್ಲಿಸಬೇಡ.</verse>
				<verse number="19">ಇಗೋ, ನನ್ನ ಕಡೆಯ ಸಾಕ್ಷಿ ಸ್ವರ್ಗದಲ್ಲಿರುವನು ನನ್ನ ಪರವಾದಿ ಮೇಲಣ ಲೋಕದಲ್ಲಿರುವನು.</verse>
				<verse number="20">ಗೆಳೆಯರು ನನ್ನನ್ನು ಹೀಗಳೆಯುತ್ತಿರುವರು ನಾನೋ ಸುರಿಸುತ್ತಿರುವೆ ದೇವರ ಮುಂದೆ ಕಣ್ಣೀರು.</verse>
				<verse number="21">ಇದು ನನಗೆ ನ್ಯಾಯ ದೊರಕಿಸಲಿ, ದೇವರ ಮುಂದೆ ತನ್ನ ಮಿತ್ರನಿಗಾಗಿ ಒಬ್ಬನು ವಾದಿಸುವಂತೆ.</verse>
				<verse number="22">ನನ್ನ ವರ್ಷಗಳು ಕಳೆದುಹೋಗುತ್ತಿವೆ ಹಿಂತಿರುಗಲಾಗದ ಹಾದಿಯನು ನಾನು ಹಿಡಿಯಲಿರುವೆ.</verse>
			</chapter>
			<chapter number="17">
				<verse number="1">“ನನಗೆ ಉಸಿರು ಕಟ್ಟುತ್ತಿದೆ ನನ್ನ ದಿನಗಳು ಮುಗಿದಿವೆ ಸಮಾಧಿ ನನಗಾಗಿ ಕಾದಿದೆ.</verse>
				<verse number="2">ಚೇಷ್ಟೆಗಾರರಿದ್ದಾರೆ ನನ್ನ ಸುತ್ತಮುತ್ತ ನನ್ನ ಕಣ್ಮುಂದಿದೆ ಸದಾ ಅವರ ಕೆಣಕಾಟ.</verse>
				<verse number="3">ಓ ದೇವರೇ, ನೀನೆ ನನಗೆ ಈಡು ಕೊಡುವವನು ನಿನ್ನನ್ನು ಬಿಟ್ಟರೆ ನನಗಿಲ್ಲ ಒಪ್ಪಂದಮಾಡುವವರಾರು.</verse>
				<verse number="4">ಜ್ಞಾನ ಪ್ರವೇಶಿಸದಂತೆ ನೀ ಅವರ ಮನಸ್ಸನು ಮುಚ್ಚಿರುವೆ ಹೀಗೆ ಅವರು ಜಯಶೀಲರಾಗದಂತೆ ತಡೆದಿರುವೆ.</verse>
				<verse number="5">ಯಾವನು ಸ್ವಾರ್ಥಕ್ಕಾಗಿ ಮಿತ್ರನ ಮೇಲೆ ಹೊರಿಸುತ್ತಾನೋ ದೂರು ಅಂಥವನ ಮಕ್ಕಳ ಕಣ್ಣುಗಳು ಮಂಕಾಗಿಹೋಗದಿರವು.</verse>
				<verse number="6">ದೇವರು ನನ್ನನು ಈಡಾಗಿಸಿದ್ದಾನೆ ಅನ್ಯರ ಕಟ್ಟುಗಾದೆಗೆ ನನ್ನ ಮುಖ ಗುರಿಯಾಗಿದೆ ಜನರ ಉಗುಳಾಟಕ್ಕೆ.</verse>
				<verse number="7">ನನ್ನ ಕಣ್ಣು ದುಃಖದಿಂದ ಮೊಬ್ಬಾಗಿವೆ ಅಂಗಗಳೆಲ್ಲ ನೆರಳಂತೆ ನಿಸ್ಸಾರವಾಗಿವೆ.</verse>
				<verse number="8">ಇದನ್ನು ಕಂಡು ಸಜ್ಜನರು ನಿಬ್ಬೆರಗಾಗಿದ್ದಾರೆ ದುರ್ಜನರ ಬಗ್ಗೆ ನಿರಪರಾಧಿ ಎಚ್ಚರಗೊಂಡಿದ್ದಾನೆ.</verse>
				<verse number="9">ಸನ್ಮಾರ್ಗದಲ್ಲಿ ಮುಂದುವರೆವವನು ಸಜ್ಜನನು ಬಲಗೊಳ್ಳುತ್ತಲೇ ಇರುವನು ಶುದ್ಧಹಸ್ತನು.</verse>
				<verse number="10">ನೀವೆಲ್ಲರೂ ಮತ್ತೆ ಬನ್ನಿ ವಾದಕ್ಕೆ ನಿಮ್ಮಲ್ಲಿ ಜ್ಞಾನಿಯೊಬ್ಬನನ್ನೂ ನಾ ಕಾಣೆ.</verse>
				<verse number="11">ಮುಗಿದುಹೋದವು ನನ್ನ ದಿನಗಳು ಭಂಗವಾದವು ನನ್ನ ಗುರಿಧ್ಯೇಯಗಳು.</verse>
				<verse number="12">ಇರುಳನ್ನು ಹಗಲೆಂದು ಸಾಧಿಸುತ್ತಿರುವರು ಕತ್ತಲಿಂದಲೇ ಬೆಳಕು ಬೇಗ ಬರಲಿದೆ ಎನ್ನುತ್ತಿರುವರು.</verse>
				<verse number="13">ಪಾತಾಳವನ್ನೇ ನನ್ನ ಮನೆಯೆಂದು ನಾನು ಭಾವಿಸಿದೆನಾದರೆ ಕತ್ತಲಲ್ಲೇ ನನ್ನ ಹಾಸಿಗೆಯನ್ನು ಹಾಕಿಕೊಂಡೆನಾದರೆ,</verse>
				<verse number="14">ಸಮಾಧಿಯನ್ನೇ ‘ನನ್ನ ತಂದೆ’ ಎಂದು ಕರೆದೆನಾದರೆ ಹುಳುವನ್ನೇ ‘ನನ್ನ ತಾಯಿ, ನನ್ನ ತಂಗಿ’ ಎಂದೆನಾದರೆ.</verse>
				<verse number="15">ನನ್ನ ನಂಬಿಕೆ-ನಿರೀಕ್ಷೆ ಎಲ್ಲಿಯದು? ನನ್ನ ಭಾಗ್ಯವನ್ನು ಯಾರು ನೋಡಿಯಾರು?</verse>
				<verse number="16">ಇವು ನನ್ನ ಸಂಗಡ ಪಾತಾಳಕ್ಕೆ ಬರಲಾದೀತೆ? ನಾವು ಜೊತೆಯಾಗಿ ಮಣ್ಣಿಗೆ ಸೇರಲಾದೀತೆ?”</verse>
			</chapter>
			<chapter number="18">
				<verse number="1">ಆಗ ಶೂಹ್ಯನಾದ ಬಿಲ್ದದನು ಹೀಗೆಂದು ಉತ್ತರಿಸಿದ:</verse>
				<verse number="2">“ಯೋಬನೇ, ಇನ್ನೆಷ್ಟರವರೆಗೆ ಮಾತುಗಳಿಗಾಗಿ ಹೊಂಚುಹಾಕುತ್ತಿರುವೆ? ಮೊದಲು ಆಲೋಚಿಸಿನೋಡು, ಆಮೇಲೆ ಬಾ ಮಾತುಕತೆಗೆ.</verse>
				<verse number="3">ನಮ್ಮನ್ನು ಮೃಗಗಳೆಂದು ಎಣಿಸಿರುವೆಯಾ? ನಿನ್ನ ದೃಷ್ಟಿಯಲಿ ನಾವೇನು ಅಷ್ಟು ದಡ್ಡರೆ?</verse>
				<verse number="4">ಸಿಟ್ಟಿನಿಂದ ನಿನ್ನನ್ನೆ ಸೀಳಿಕೊಳ್ಳುತ್ತಿರುವವನೇ, ನಿನ್ನ ನಿಮಿತ್ತ ಇಡೀಲೋಕ ಬಿಕೋ ಎನ್ನಬೇಕೆ? ಬೆಟ್ಟಗುಡ್ಡಗಳು ಸ್ಥಳಬಿಟ್ಟು ಜರುಗಬೇಕೆ?</verse>
				<verse number="5">ಹೌದು, ದುರುಳನ ದೀಪ ಆರಿಹೋಗುವುದು ಅವನ ಒಲೆಯು ಉರಿಯದೆ ಹೋಗುವುದು.</verse>
				<verse number="6">ಅವನ ಗುಡಾರದ ಬೆಳಕು ಕತ್ತಲಾಗುವುದು ಅವನ ಮೇಲಣ ಸೊಡರು ನಂದಿಹೋಗುವುದು.</verse>
				<verse number="7">ಅವನ ಬಿರುಸಾದ ಹೆಜ್ಜೆಗಳು ಜಡವಾಗುವುವು ಅವನು ಹಾಕಿದ ಯೋಜನೆಗಳು ಅವನನ್ನೆ ಕೆಡವಿಹಾಕುವುವು.</verse>
				<verse number="8">ಅವನನ್ನು ಅವನ ಕಾಲುಗಳೆ ಬಲೆಗೆ ಬೀಳಿಸುವುವು ಅವನನ್ನು ಪಾಳುಗುಂಡಿಯ ಮೇಲೆ ನಡೆಸುವುವು.</verse>
				<verse number="9">ಕತ್ತರಿಬೋನು ಅವನ ಹಿಮ್ಮಡಿಯನ್ನು ಕಚ್ಚುವುದು ಆ ಕಳ್ಳ ಉರುಲು ಅವನನ್ನು ಸಿಕ್ಕಿಸಿಕೊಳ್ಳುವುದು.</verse>
				<verse number="10">ಅವನಿಗಾಗಿ ಜಾಲವನ್ನು ಅವಿತಿಡಲಾಗಿದೆ ದಾರಿಯಲಿ ಅವನಿಗಾಗಿ ಪಾಶವನ್ನು ಹೂತಿಡಲಾಗಿದೆ ನೆಲದಲಿ.</verse>
				<verse number="11">ಸುತ್ತಲಿನ ಅಪಾಯಗಳು ಅವನನ್ನು ಹೆದರಿಸುತ್ತವೆ ಅವನ ಹಿಮ್ಮಡಿ ತುಳಿಯುತ್ತಾ ಅವು ಬೆನ್ನು ಹತ್ತುತ್ತವೆ.</verse>
				<verse number="12">ಕುಂದಿಹೋಗುವುದು ಅವನ ಕಿಮ್ಮತ್ತು ಅವನು ಬೀಳುವುದನ್ನೇ ಕಾದಿದೆ ಆಪತ್ತು.</verse>
				<verse number="13">ರೋಗರುಜಿನಗಳು ಅವನ ಚರ್ಮವನು ಚೂರುಚೂರಾಗಿ ತಿಂದುಬಿಡುವುವು ಅಂಗಾಂಗವಾಗಿ ಮೃತ್ಯುಕಾರಕ ರೋಗವು ಅವನನ್ನು ನುಂಗಿಬಿಡುವುದು.</verse>
				<verse number="14">ನೆಮ್ಮದಿಯ ಗುಡಾರದಿಂದ ಅವನನ್ನು ಎಳೆದು ಹಾಕುವುದು ಹೊರಗೆ ಸಾಗಿಸಿಕೊಂಡು ಹೋಗುವುದವನನ್ನು ಅತಿಭಯಂಕರ ರಾಜನೆಡೆಗೆ.</verse>
				<verse number="15">ಅನ್ಯಜನರು ವಾಸಮಾಡುವರು ಅವನ ಗುಡಾರದೊಳಗೆ ಗಂಧಕವನ್ನು ಸುರಿಸಲಾಗುವುದು ಅವನ ಮನೆಯ ಮೇಲೆ.</verse>
				<verse number="16">ಒಣಗುವುದು ಅವನ ಬುಡ ಕೆಳಗಡೆ ಬಾಡುವುದು ಅವನ ರೆಂಬೆ ಮೇಲ್ಗಡೆ.</verse>
				<verse number="17">ಅವನ ಸ್ಮರಣೆ ಅಳಿದುಹೋಗುವುದು ಜಗದಲಿ ಇಲ್ಲವಾಗುವುದು ಅವನ ಹೆಸರು ನಾಡಿನಲಿ.</verse>
				<verse number="18">ಅವನನ್ನು ಬೆಳಕಿನಿಂದ ತಳ್ಳುವರು ಕತ್ತಲಿಗೆ ಅಟ್ಟಿಬಿಡುವರು ಅವನನ್ನು ಲೋಕದಿಂದಲೆ.</verse>
				<verse number="19">ಅವನ ಮಗ, ಮೊಮ್ಮಗರಾರೂ ಇರರು ಸ್ವಜನರಲಿ ಯಾರೂ ಉಳಿಯರು ಅವನು ವಾಸಿಸಿದ ಸ್ಥಳದಲಿ.</verse>
				<verse number="20">ಅವನ ಗತಿಯನು ಕೇಳಿ ಚಕಿತಗೊಳ್ವರು ಪಡುವಣದವರು ಅಂತೆಯೇ ಭಯಭ್ರಾಂತರಾಗುವರು ಮೂಡಣದವರು.</verse>
				<verse number="21">ಕೇಡಿಗರ ನಿವಾಸಗಳ ಗತಿ ಹೀಗೆಯೇ ದೇವರನು ಅಲಕ್ಷಿಸುವವನ ಸ್ಥಿತಿ ಇದುವೇ.”</verse>
			</chapter>
			<chapter number="19">
				<verse number="1">ಆಗ ಯೋಬನು ಮತ್ತೆ ಹೀಗೆಂದನು:</verse>
				<verse number="2">“ಇನ್ನೆಷ್ಟರವರೆಗೆ ನೀವು ನನ್ನನ್ನು ನೋಯಿಸುವಿರಿ? ನಿಮ್ಮ ಮಾತುಗಳಿಂದ ನನ್ನನು ನಸುಕುತ್ತಿರುವಿರಿ?</verse>
				<verse number="3">ಈವರೆಗೆ ನನಗೆ ಕೇಡು ಮಾಡಿದ್ದಕ್ಕೆ ಹತ್ತಾರು ಸಾರಿ ನನ್ನನ್ನು ಅವಮಾನಿಸಿದ್ದಕ್ಕೆ ನಿಮಗಾಗುವುದಿಲ್ಲವೆ ನಾಚಿಕೆ?</verse>
				<verse number="4">ನಿಶ್ಚಯವಾಗಿ ನಾನು ತಪ್ಪುಳ್ಳವನಾದರೆ ಅದರಿಂದ ನಿಮಗೇನು? ಆ ತಪ್ಪು ನನ್ನದೆ.</verse>
				<verse number="5">ನನಗಿಂತ ನೀವೇ ಮೇಲೆಂದು ಭಾವಿಸುತ್ತೀರೋ? ನನ್ನ ದೀನ ಸ್ಥಿತಿಗೆ ನನ್ನ ದೋಷವೇ ಕಾರಣವೆನ್ನುತ್ತೀರೋ?</verse>
				<verse number="6">ನನಗೆ ಅನ್ಯಾಯವಾಗಿರುವುದು ದೇವರಿಂದಲೇ ನನ್ನ ಸುತ್ತಲು ಬಲೆಯೊಡ್ಡಿರುವವನು ಆತನೇ! ನಾನು ಹೇಳುವ ಈ ಮಾತು ತಿಳಿದಿರಲಿ ನಿಮಗೆ:</verse>
				<verse number="7">‘ಇದೋ ಹಿಂಸಾಚಾರ’ ಎಂದು ನಾನು ಕೂಗಿಕೊಂಡರೂ ಕೇಳುವವರಿಲ್ಲ ನಾನು ಮೊರೆಯಿಟ್ಟರೂ ನನಗೆ ನ್ಯಾಯ ದೊರಕುವುದಿಲ್ಲ.</verse>
				<verse number="8">ನಾನು ಮುಂದೆ ಹೋಗದಂತೆ ದೇವರು ಅಡ್ಡಗೋಡೆ ಹಾಕಿದ್ದಾನೆ ನನ್ನ ಹಾದಿಗೆ ಕತ್ತಲೆ ಕವಿಯುವಂತೆ ಮಾಡಿದ್ದಾನೆ.</verse>
				<verse number="9">ನನ್ನ ಘನತೆಯನ್ನು ಸುಲಿದುಬಿಟ್ಟಿದ್ದಾನೆ ನನ್ನ ಕಿರೀಟವನ್ನು ಕಿತ್ತುಹಾಕಿದ್ದಾನೆ.</verse>
				<verse number="10">ನಾಲ್ದೆಸೆಯಿಂದ ಧಾಳಿಮಾಡಿ ನಾಶಮಾಡಿದ್ದಾನೆ ಮರ ಕೀಳುವ ಪ್ರಕಾರ ನನ್ನ ನಿರೀಕ್ಷೆಯನು ಕಿತ್ತುಬಿಟ್ಟಿದ್ದಾನೆ.</verse>
				<verse number="11">ತನ್ನ ಕೋಪಾಗ್ನಿಯನು ನನ್ನ ಮೇಲೆ ಧಗಧಗಿಸಿದ್ದಾನೆ ನನ್ನನ್ನು ತನ್ನ ವೈರಿಯೆಂದೇ ಪರಿಗಣಿಸಿದ್ದಾನೆ.</verse>
				<verse number="12">ಮುನ್ನುಗ್ಗಿ ಬಂದಿದೆ ಆತನ ಸೇನೆ ಒಟ್ಟಿಗೆ ದಿಬ್ಬಹಾಕಿಕೊಂಡಿದೆ ಅದು ನನ್ನೆದುರಿಗೆ ನನ್ನ ಗುಡಾರದ ಎಲ್ಲಾ ಕಡೆಗೆ ದಂಡು ಇಳಿದಿದೆ.</verse>
				<verse number="13">ಸೋದರನನ್ನೂ ನನ್ನಿಂದ ದೇವರು ದೂರವಾಗಿರಿಸಿದ್ದಾನೆ ಪರಿಚಿತರೆಲ್ಲರು ನನ್ನನು ತೊರೆದುಬಿಟ್ಟಿದ್ದಾರೆ.</verse>
				<verse number="14">ನನ್ನನು ಬಂಧುಬಳಗದವರು ಕೈಬಿಟ್ಟಿದ್ದಾರೆ ಆಪ್ತಮಿತ್ರರೂ ನನ್ನನು ಮರೆತುಬಿಟ್ಟಿದ್ದಾರೆ.</verse>
				<verse number="15">ಮನೆಯ ದಾಸದಾಸಿಯರಿಗೇ ನಾನು ಅನ್ಯನಾದೆ ಅವರ ಕಣ್ಣಿಗೇ ನಾನು ಪರದೇಶಿಯನಾದೆ.</verse>
				<verse number="16">ಕರೆದರೂ ನನ್ನ ಸೇವಕರು ಉತ್ತರಕೊಡುವುದಿಲ್ಲ ಬಾಯಿತೆರೆದು ಬೇಡಿಕೊಳ್ಳುವ ಸ್ಥಿತಿ ನನ್ನದಾಯಿತಲ್ಲಾ!</verse>
				<verse number="17">ನನ್ನುಸಿರು ನನ್ನ ಧರ್ಮಪತ್ನಿಗೆ ಅಸಹ್ಯವಾಗಿದೆ ನನ್ನ ಹೊಟ್ಟೆಯಲ್ಲಿ ಹುಟ್ಟಿದ ಮಕ್ಕಳಿಗೇ ಹೇಸಿಕೆಯಾದೆ.</verse>
				<verse number="18">ಚಿಕ್ಕವರು ಕೂಡ ನನ್ನನು ತಿರಸ್ಕರಿಸುತ್ತಾರೆ ನಾನು ಕಾಣಿಸಿಕೊಂಡಾಗಲೆಲ್ಲ ಹಾಸ್ಯಮಾಡುತ್ತಾರೆ.</verse>
				<verse number="19">ನನ್ನ ನೋಡಿ ಆಪ್ತಮಿತ್ರರೆಲ್ಲರು ಹೇಸಿಕೊಳ್ಳುತ್ತಾರೆ ನನ್ನ ಮೇಲೆ ನನ್ನ ಪ್ರೀತಿಪಾತ್ರರೂ ತಿರುಗಿಬಿದ್ದಿದ್ದಾರೆ.</verse>
				<verse number="20">ಕೇವಲ ಎಲುಬೂ ತೊಗಲೂ ಆಗಿಬಿಟ್ಟಿದ್ದೇನೆ ಮೃತ್ಯುವಿನ ದವಡೆಗೆ ಸಿಕ್ಕಿಕೊಂಡಿದ್ದೇನೆ.</verse>
				<verse number="21">ಕರುಣೆ ತೋರಿ ಗೆಳೆಯರೇ, ಕರುಣೆ ತೋರಿ ನನಗೆ! ಏಕೆಂದರೆ ದೇವರ ಕೈ ನನ್ನನು ದಂಡಿಸಿದೆ.</verse>
				<verse number="22">ದೇವರಂತೆ ನೀವೂ ನನ್ನನು ದಂಡಿಸುವುದೇಕೆ? ನನ್ನನ್ನು ಛಿನ್ನಪನ್ನವಾಗಿಸಿದ್ದೀರಿ, ಇದು ಸಾಲದೆ ನಿಮಗೆ?</verse>
				<verse number="23">ನನ್ನ ಮಾತುಗಳನು ಬರೆದಿಟ್ಟರೆ ಎಷ್ಟೋ ಮೇಲು! ಸುರುಳಿಯಲಿ ಅದು ಲಿಖಿತವಾದರೆ ಎಷ್ಟೋ ಲೇಸು!</verse>
				<verse number="24">ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸೆ ಎರೆದು ಶಾಶ್ವತ ಶಾಸನವಾಗಿಸಿದ್ದರೆ ಎಷ್ಟೋ ಒಳಿತು.</verse>
				<verse number="25">ನಾನಂತು ಬಲ್ಲೆ, ನನ್ನ ಉದ್ಧಾರಕ ಜೀವಸ್ವರೂಪನೆಂದು ಕಡೆಯ ದಿನದಂದು ಧರೆಗಾತ ಇಳಿದುಬರುವನೆಂದು.</verse>
				<verse number="26">ನನ್ನ ಚರ್ಮ ಹೀಗೆ ಬಿರಿದು ಹಾಳಾದರೂ ದೇಹಧಾರಿಯಾಗಿಯೇ ನಾನು ನೋಡುವೆನು ದೇವರನು.</verse>
				<verse number="27">ಕಣ್ಣಾರೆ ಆತನನ್ನು ಕಾಣುವೆನು ಮತ್ತೊಬ್ಬನಾಗಲ್ಲ, ನಾನಾಗೇ ನೋಡುವೆನು. ಹಂಬಲಿಕೆಯಿಂದ ಕುಂದಿದೆ ನನ್ನ ಅಂತರಂಗವು.</verse>
				<verse number="28">‘ಅವನನ್ನು ಆದಷ್ಟೂ ಹಿಂಸೆಮಾಡೋಣ ಅವನ ದುರ್ಗತಿಗೆ ಮೂಲಕಾರಣ ಹುಡುಕೋಣ’ ಎಂದು ನೀವು ಆಡಿಕೊಳ್ಳುವ ಕಾರಣ.</verse>
				<verse number="29">ಭಯಪಡಿ ನೀವು ಕತ್ತಿಗೆ ಪಾಪದ ಮೇಲೆ ದೇವರ ಕೋಪ ಬರಮಾಡುವಾ ಕತ್ತಿಗೆ ನ್ಯಾಯತೀರ್ಪು ಉಂಟೆಂದು ಆಗ ತಿಳಿವುದು ನಿಮಗೆ.”</verse>
			</chapter>
			<chapter number="20">
				<verse number="1">ಬಳಿಕ ನಾಮಾಥ್ಯನಾದ ಚೋಫರನು ಹೀಗೆಂದನು:</verse>
				<verse number="2">“ನಿನಗೆ ಉತ್ತರಕೊಡಲು ನಾನು ತವಕಪಡುತ್ತಿರುವೆ ನನ್ನ ನೊಂದ ಮನ ನನಗೆ ಪ್ರತ್ಯುತ್ತರ ಹೇಳಿಕೊಡುತ್ತದೆ:</verse>
				<verse number="3">ನನಗೆ ಅವಮಾನ ತರುವ ನಿನ್ನ ಖಂಡನೆಯನು ಕೇಳಿದ್ದೇನೆ ನನ್ನ ಮನ ತನ್ನ ವಿವೇಚನೆ ಕಲಿಸಿದ ಉತ್ತರವನು ತಿಳಿಸುತ್ತಿದೆ.</verse>
				<verse number="4">ಆದಿಯಿಂದಲೆ, ನರನನ್ನು ಧರೆಯಮೇಲೆ ಇರಿಸಿದಂದಿನಿಂದಲೆ, ನಡೆದುಬರುತ್ತಿರುವ ಈ ವಿಷಯ ನಿನಗೆ ತಿಳಿಯದೆ?</verse>
				<verse number="5">ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.</verse>
				<verse number="6">ಅವನ ಪ್ರತಿಷ್ಠೆ ಆಕಾಶಕ್ಕೆ ಏರಿದರೂ ಅವನ ತಲೆ ಮೋಡಗಳನು ಮುಟ್ಟಿದರೂ,</verse>
				<verse number="7">ತನ್ನ ಮಲದ ಹಾಗೆ ನಿತ್ಯಕ್ಕು ಅವನು ನಶಿಸಿಹೋಗುವನು ಅವನನು ಅರಿತವರೆಲ್ಲರೂ “ಅವನೆಲ್ಲಿಯೋ!’ ಎಂದು ಹೇಳುವರು.</verse>
				<verse number="8">ಸ್ವಪ್ನದಂತೆ ಅವನು ಸಿಗದೆ ಹಾರಿಹೋಗುವನು ರಾತ್ರಿಯ ಕನಸಿನಂತೆ ಓಡಿಹೋಗುವನು.</verse>
				<verse number="9">ಕಂಡವನ ಕಣ್ಣಿಗೆ ಅವನು ಮತ್ತೆ ಕಾಣಿಸನು ಅವನ ನಿವಾಸ ಮತ್ತೆ ಅವನನು ನೋಡದು.</verse>
				<verse number="10">ಅವನ ಮಕ್ಕಳು ಬಡವರಿಗೆ ಪರಿಹಾರವನು ತೆರುವರು ಅವನ ಕೈಗಳೆ ಅವನಾಸ್ತಿಯನು ಹಿಂತಿರುಗಿಸಬೇಕಾಗುವುದು.</verse>
				<verse number="11">ಯೌವನ ಅವನ ದೇಹದಲ್ಲಿ ತುಂಬಿತ್ತು ಅದು ಕೂಡ ಅವನ ಸಮೇತ ಧೂಳಿನಲಿ ಮಲಗುವುದು.</verse>
				<verse number="12">ಕೆಡಕುತನ ಸಿಹಿಯಾಗಿತ್ತು ಅವನ ಬಾಯಿಗೆ ಬಚ್ಚಿಟ್ಟುಕೊಂಡಿದ್ದನು ಅದನ್ನು ನಾಲಿಗೆ ಕೆಳಗೆ.</verse>
				<verse number="13">ಅದನ್ನು ಬಿಟ್ಟುಕೊಡಲು ಅವನಿಗೆ ಇಷ್ಟವಿಲ್ಲ ಬಾಯಲ್ಲೇ ಇಟ್ಟುಕೊಳ್ಳುತ್ತಾನೆ ಚಪ್ಪರಿಸುತ್ತಾ.</verse>
				<verse number="14">ಆದರೆ ಆ ತಿಂಡಿ ತಿಂದ ಮೇಲೆ ಮಾರ್ಪಡುವುದು ಅವನ ಕರುಳೊಳಗೆ ನಾಗರವಿಷವಾಗುವುದು.</verse>
				<verse number="15">ನುಂಗಿದ ಗಂಟನು ಅವನು ಹೊರಗೆ ಕಕ್ಕುವನು ಹೊಟ್ಟೆಯಿಂದ ದೇವರು ಅದನು ಹೊರಡಿಸುವನು.</verse>
				<verse number="16">ಅವನು ಹೀರುವುದು ನಾಗರವಿಷವನು ಸರ್ಪದ ನಾಲಿಗೆ ಕೊಲ್ಲುವುದು ಅವನನು.</verse>
				<verse number="17">ಅವನು ನೋಡನು ಎಣ್ಣೆ ಹರಿವ ಕಾಲುವೆಗಳನು ಜೇನು ಹಾಲು ತುಂಬಿ ಹರಿವ ನದಿಗಳನು.</verse>
				<verse number="18">ತಾನು ದುಡಿದು ಗಳಿಸಿದ್ದನ್ನು ತಿಂದು ಅನುಭವಿಸಲಾರನು ಅದು ಪರರ ಪಾಲಾಗುವುದು ವ್ಯಾಪಾರದಿಂದ ಬಂದ ವರಮಾನ ಅವನಿಗೆ ಆನಂದ ತರದು.</verse>
				<verse number="19">ಏಕೆಂದರೆ ಬಡವರನು ತುಳಿದು ತೊರೆದುಬಿಟ್ಟ ತಾನು ಕಟ್ಟದ ಮನೆಯನು ಕಿತ್ತುಕೊಂಡುಬಿಟ್ಟ.</verse>
				<verse number="20">ಅವನ ಆಕಾಂಕ್ಷೆಗೆ ತೃಪ್ತಿಯೇ ಇಲ್ಲ ಅವನ ಸಿರಿಸಂಪತ್ತು ಅವನನ್ನು ರಕ್ಷಿಸುವುದಿಲ್ಲ.</verse>
				<verse number="21">ಏನನ್ನೂ ಬಿಡದೆ ಕಬಳಿಸಿದ ಅವನ ಸಂತಾನಕ್ಕೆ ಉಳಿಗಾಲವಿಲ್ಲ.</verse>
				<verse number="22">ಸಮೃದ್ಧಿಯಿಂದಿರುವಾಗಲೇ ಕೊರತೆ ಅವನನ್ನು ಕಾಡುವುದು ಶ್ರಮಜೀವಿಗಳೆಲ್ಲರ ಕೈ ಅವನ ಮೇಲೆ ಎರಗುವುದು.</verse>
				<verse number="23">ಅವನು ಹೊಟ್ಟೆಯನು ತುಂಬಿಸಿಕೊಳ್ಳುವಾಗಲೇ ದೇವರು ಸುರಿಸುವರು ಕೋಪಾಗ್ನಿಯನು ಆಹಾರದಂತೆ.</verse>
				<verse number="24">ಕಬ್ಬಿಣದ ಆಯುಧಕ್ಕೆ ಹೆದರಿ ಓಡಿದ ಆದರೆ ಅವನನು ಇರಿಯಿತು ಕಂಚಿನ ಬಾಣ.</verse>
				<verse number="25">ಆ ಬಾಣವನು ಕೀಳಲು ಅದು ಹೊರಬಂತು ಅವನ ಬೆನ್ನಿನಿಂದ ಅದರ ಮಿಂಚುಮೊನೆ ಆಚೆಬಂತು ಅವನ ಪಿತ್ತಕೋಶದಿಂದ ಅವನನು ಆವರಿಸಿಕೊಂಡಿತು ಭಯಭ್ರಾಂತ.</verse>
				<verse number="26">ಅವನ ನಿಧಿನಿಕ್ಷೇಪಕ್ಕಾಗಿ ಕಾರಿರುಳು ಕಾದಿದೆ ಯಾರೂ ಹೊತ್ತಿಸದ ಬೆಂಕಿ ಅವನನು ಕಬಳಿಸಲಿದೆ ಅವನ ಗುಡಾರದಲಿ ಉಳಿದದ್ದೆಲ್ಲ ನಾಶವಾಗಲಿದೆ.</verse>
				<verse number="27">ಆಕಾಶವೇ ಅವನ ದೋಷವನು ಪ್ರಕಟಿಸುವುದು ಭೂಲೋಕವೇ ಅವನ ವಿರುದ್ಧ ಸಾಕ್ಷಿನಿಲ್ಲುವುದು.</verse>
				<verse number="28">ಅವನ ಮನೆಯ ಧನಧಾನ್ಯ ಹಾಳಾಗುವುದು ದೇವರ ಸಿಟ್ಟಿನಾದಿನ ನೀರುಪಾಲಾಗುವುದು.</verse>
				<verse number="29">ಇದುವೆ ದುರುಳನಿಗೆ ದೇವರು ವಿಧಿಸುವ ಭಾಗ್ಯ ದೇವರಿಂದ ಅವನಿಗೆ ನೇಮಿಸಲಾಗಿರುವ ಸ್ವಾಸ್ತ್ಯ.”</verse>
			</chapter>
			<chapter number="21">
				<verse number="1">ಅದಕ್ಕೆ ಯೋಬನು ಕೊಟ್ಟ ಉತ್ತರ ಇದು:</verse>
				<verse number="2">“ಗಮನಕೊಡಿ ನನ್ನ ಮಾತುಗಳಿಗೆ ನಾನು ನಿಮ್ಮಿಂದ ಬಯಸುವ ಉಪಶಮನ ಇದುವೆ:</verse>
				<verse number="3">ನಾನು ಮಾತಾಡುವಾಗ ತಾಳ್ಮೆಯಿಂದಿರಿ ಬಳಿಕ ಬೇಕಾದರೆ ಪರಿಹಾಸ್ಯ ಮಾಡಿ.</verse>
				<verse number="4">ನನ್ನ ದೂರು ಮನುಷ್ಯನ ವಿರುದ್ಧವೆ? ಸಾಕಷ್ಟು ಕಾರಣವಿರಲು, ನಾನು ಬೇಸರಗೊಳ್ಳಬಾರದೆ?</verse>
				<verse number="5">ನನ್ನ ಕಡೆಗೆ ಗಮನ ಕೊಡಿ ಬಾಯಿಯ ಮೇಲೆ ಕೈಯಿಟ್ಟು ನಿಬ್ಬೆರಗಾಗಿರಿ.</verse>
				<verse number="6">ಇದನು ನೆನೆದಾಗ ನನಗೆ ತಲ್ಲಣವಾಗುತ್ತದೆ ನನ್ನ ದೇಹಕ್ಕೆ ನಡುಕ ಬರುತ್ತದೆ:</verse>
				<verse number="7">ದುರುಳರು ಮುದುಕರಾಗುವವರೆಗೂ ಬದುಕುವುದೇಕೆ? ಅಂಥವರು ಪ್ರಬಲರು, ಬಲಿಷ್ಠರು ಆಗುವುದೇಕೆ?</verse>
				<verse number="8">ಅವರ ಸಂತಾನ ಅವರ ಸಮ್ಮುಖದಲ್ಲಿ ಸುಸ್ಥಿರವಾಗಿದೆ ಅವರ ಕುಟುಂಬ ಅವರ ಕಣ್ಮುಂದೆಯೇ ಅಚಲವಾಗಿದೆ.</verse>
				<verse number="9">ಅವರ ಮನೆ ನಿರ್ಭೀತ, ಹಾಗೂ ಸುರಕ್ಷಿತ ಅವರ ಮೇಲೆ ಬೀಳದು ದೇವರ ದಂಡ.</verse>
				<verse number="10">ಅವರ ಹೋರಿ ತಪ್ಪದೆ ಫಲವತ್ತಾಗಿಸುತ್ತದೆ ಅವರ ಗೋವು ಕಂದುಹಾಕದೆ ಈಯುತ್ತದೆ.</verse>
				<verse number="11">ಅವರ ಮಕ್ಕಳು ಮುನ್ನಡೆಯುತ್ತಾರೆ ಮಂದೆಯಂತೆ ಅವರ ಬಾಲಬಾಲೆಯರು ಕುಣಿದಾಡುತ್ತಾರೆ ಜಿಂಕೆಯಂತೆ.</verse>
				<verse number="12">ಹಾಡುತ್ತಾರೆ ತಂಬೂರಿ ವೀಣೆಗಳನು ನುಡಿಸುತ್ತಾ ಉಲ್ಲಾಸಿಸುತ್ತಾರೆ ಕೊಳಲಿನ ಸ್ವರ ಕೇಳುತ್ತಾ.</verse>
				<verse number="13">ದಿನಗಳನು ಕಳೆಯುತ್ತಾರೆ ಸುಖಸಂತೋಷದಿಂದ ಸಮಾಧಿ ಸೇರುತ್ತಾರೆ ಸಮಾಧಾನದಿಂದ.</verse>
				<verse number="14">ಆದರೆ ಈ ದುರುಳರೇ, ದೇವರಿಗೆ, ‘ನಮ್ಮನ್ನು ಬಿಟ್ಟು ತೊಲಗು, ನಮಗೆ ಬೇಡವಾಗಿದೆ ನಿನ್ನ ಮಾರ್ಗದ ಅರಿವು’.</verse>
				<verse number="15">‘ಈ ಸರ್ವಶಕ್ತ ಎಷ್ಟರವನು: ಆತನ ಸೇವೆ ನಮಗೇಕೆ? ಆತನಿಗೆ ಪ್ರಾರ್ಥನೆಮಾಡಿ ಪ್ರಯೋಜನವೇನು?’ ಎಂದಿದ್ದಾರೆ.</verse>
				<verse number="16">ಆಹಾ! ಸದ್ಯಕ್ಕೆ ಸುಖಶಾಂತಿ ನೆಲಸಿಲ್ಲ ಅವರ ಕೈಯಲಿ ಆ ದುರುಳರ ಆಲೋಚನೆ ನನ್ನಿಂದ ದೂರವಿರಲಿ.</verse>
				<verse number="17">ಆ ದುರುಳರ ದೀಪ ಆರಿಹೋದದ್ದು ಎಷ್ಟುಸಾರಿ? ಅವರಿಗೆ ವಿಪತ್ತು ಸಂಭವಿಸಿದ್ದು ಎಷ್ಟುಸಾರಿ? ಅವರ ಕೋಪ ಅವರಿಗೆ ಸಂಕಟ ತಂದದ್ದು ಎಷ್ಟುಬಾರಿ?</verse>
				<verse number="18">ಅವರು ಗಾಳಿಗೆ ತೂರಿಹೋದ ಹುಲ್ಲಾದುದು ಎಷ್ಟು ಸಲ? ಬಿರುಗಾಳಿ ಕೊಚ್ಚಿಕೊಂಡುಹೋದ ಹೊಟ್ಟಾದುದು ಎಷ್ಟು ಸಲ?</verse>
				<verse number="19">ದುಷ್ಟ ತಂದೆಯ ಪಾಪಫಲವನು ಮಕ್ಕಳಿಗೆ ಕಾದಿಟ್ಟಿದ್ದಾರೆಯೇ ದೇವರು? ಅವನಿಗೇ ಆ ದಂಡನೆ ಆಗಲಿ ಆ ದುಷ್ಟನೇ ಅದನ್ನು ಅನುಭವಿಸಲಿ.</verse>
				<verse number="20">ಅವನೇ ತನ್ನ ವಿನಾಶವನು ಕಣ್ಣಾರೆ ಕಾಣಲಿ ಅವನೇ ಸರ್ವಶಕ್ತನಾ ರೌದ್ರರಸವನು ಸವಿಯಲಿ.</verse>
				<verse number="21">ಅವನ ಆಯುಸ್ಸೇ ಕತ್ತರಿಸಿಹೋದ ಮೇಲೆ ಅವನಿಗೆಲ್ಲಿಯದು ತನ್ನಾನಂತರ ಬರುವ ಸಂತತಿಯ ಚಿಂತೆ?</verse>
				<verse number="22">ದೇವರಿಗೆ ಜ್ಞಾನಬೋಧೆ ಮಾಡಬಲ್ಲವನು ಇದ್ದಾನೆಯೇ? ಉನ್ನತರಿಗೂ ನ್ಯಾಯತೀರಿಸುವಂಥವನು ಆತನೇ ಅಲ್ಲವೇ?</verse>
				<verse number="23">ಒಬ್ಬ ಸಾಯುತ್ತಾನೆ ಸಮೃದ್ಧನಾಗಿರುವಾಗ ಸುಖಶಾಂತಿಯಿಂದ ನೆಮ್ಮದಿಯಾಗಿರುವಾಗ.</verse>
				<verse number="24">ಅವನ ದೇಹ ಬೆಳೆದು ಕೊಬ್ಬೇರಿರುತ್ತದೆ ಅವನ ಅಸ್ತಿಗಳ ಮಜ್ಜೆ ಸಾರವತ್ತಾಗಿರುತ್ತದೆ.</verse>
				<verse number="25">ಮತ್ತೊಬ್ಬ ಕಿಂಚಿತ್ತೂ ಸುಖಾನುಭವವಿಲ್ಲದೆ ಮನೋವ್ಯಥೆಪಡುತ್ತಾ ಪ್ರಾಣಬಿಡುತ್ತಾನೆ.</verse>
				<verse number="26">ಇವರಿಬ್ಬರೂ ಮಣ್ಣಿನಲ್ಲಿ ಹೂಣಲ್ಪಡುತ್ತಾರೆ ಹುಳುಗಳು ಅವರನು ಮುತ್ತಿಕೊಳ್ಳುತ್ತವೆ.</verse>
				<verse number="27">ಕೇಳಿ, ನಿಮ್ಮ ಆಲೋಚನೆಗಳನು ನಾನು ಬಲ್ಲೆ ನನಗೆ ವಿರುದ್ಧ ನೀವು ಮಾಡುವ ಕುಯುಕ್ತಿ ನನಗೆ ತಿಳಿದಿದೆ.</verse>
				<verse number="28">ನಿಮ್ಮ ಪ್ರಶ್ನೆ ಇದು: “ಆ ಖದೀಮನ ಮನೆ ಏನಾಯಿತು? ಆ ದುರುಳರು ನಿವಾಸಿಸುತ್ತಿದ್ದ ಗುಡಾರ ಏನಾಯಿತು?”</verse>
				<verse number="29">ದಾರಿಹೋಕರನ್ನು ನೀವು ವಿಚಾರಿಸಿಲ್ಲವೆ? ಅವರು ಕೊಟ್ಟ ದೃಷ್ಟಾಂತ ನಿಮಗೆ ಹಿಡಿಸಲಿಲ್ಲವೆ?</verse>
				<verse number="30">ದುರುಳನು ಆಪತ್ತಿನಾ ದಿನ ಸುರಕ್ಷಿತನಾಗಿರುತ್ತಾನೆ ದೇವರ ಆ ಕೋಪೋದ್ರೇಕದ ದಿನ ಆಶ್ರಯ ಪಡೆಯುತ್ತಾನೆ.</verse>
				<verse number="31">ಅವನಿಗೆ ‘ನೀನು ದುರ್ಮಾರ್ಗಿ’ ಎಂದು ಮುಖಾಮುಖಿಯಾಗಿ ಹೇಳಿದವರಾರು? ಅವನು ಮಾಡಿದ ದುಷ್ಕೃತ್ಯಗಳಿಗೆ ಮುಯ್ಯಿತೀರಿಸುವವರಾರು?</verse>
				<verse number="32">ಮೆರವಣಿಗೆಯಾಗಿ ಅವನನ್ನು ಸಮಾಧಿಗೆ ಒಯ್ಯುತ್ತಾರೆ ಅವನ ಗೋರಿಗೆ ಕಾವಲು ಕೂಡ ಇಡುತ್ತಾರೆ.</verse>
				<verse number="33">ಅವನಿಗೆ ಹಿಡಿಸುತ್ತದೆ ತಗ್ಗಿನಾ ಹೆಂಟೆಮಣ್ಣು ಅವನನು ಹಿಂಬಾಲಿಸುತ್ತಾರೆ ಅಸಂಖ್ಯಾತ ಜನರು ಮುಂದಕ್ಕೂ ಹಿಂಬಾಲಿಸುತ್ತಾರೆ ಲೆಕ್ಕವಿಲ್ಲದ ಜನರು.</verse>
				<verse number="34">ಇಂತಿರಲು ನಿಮ್ಮ ಉಪಶಮನದ ಮಾತು ವ್ಯರ್ಥ ನಿಮ್ಮ ಮಾತುಗಳ ಸಾರಾಂಶ ಮಿತ್ರದ್ರೋಹ.”</verse>
			</chapter>
			<chapter number="22">
				<verse number="1">ಆಮೇಲೆ ತೇಮಾನ್ಯನಾದ ಎಲೀಫಜನು ಮತ್ತೆ ಹೀಗೆಂದನು:</verse>
				<verse number="2">“ನರಮಾನವನಿಂದ ದೇವರಿಗೇನು ಪ್ರಯೋಜನ? ಬುದ್ಧಿವಂತನಾಗಿ ನಡೆದುಕೊಂಡರೆ ಅದು ಅವನಿಗೇ ಪ್ರಯೋಜನ.</verse>
				<verse number="3">ನೀನು ಸಜ್ಜನನಾಗಿದ್ದರೆ ಅದರಿಂದ ಸರ್ವಶಕ್ತನಿಗೆ ಸುಖವೇ? ನಿನ್ನ ನಿರ್ದೋಷ ನಡತೆಯಿಂದ ಆತನಿಗೆ ಲಾಭವೇ?</verse>
				<verse number="4">ನಿನ್ನ ಭಯಭಕ್ತಿಗಾಗಿ ಆತ ನಿನ್ನನ್ನು ಶಿಕ್ಷಿಸುತ್ತಾನೆಯೇ? ಅದಕ್ಕಾಗಿ ನಿನ್ನನು ನ್ಯಾಯತೀರ್ಪಿಗೆ ಗುರಿಪಡಿಸುತ್ತಾನೆಯೆ?</verse>
				<verse number="5">ಇಲ್ಲ,ಹಾಗೆಮಾಡುವುದು ನಿನ್ನ ಕೆಟ್ಟತನ ಹೆಚ್ಚಿದುದಕ್ಕಾಗಿ. ನಿನ್ನ ಪಾಪಗಳಿಗೆ ಮಿತಿಯಿಲ್ಲದುದಕ್ಕಾಗಿ.</verse>
				<verse number="6">ನೀನು ನಿನ್ನ ಸೋದರನಿಂದ ಬಟ್ಟೆಯನು ಒತ್ತೆಯಾಗಿ ಪಡೆದೆ ಬಟ್ಟೆಕಿತ್ತುಕೊಂಡು ಅವನನ್ನು ಬೆತ್ತಲೆಯಾಗಿಸಿದೆ.</verse>
				<verse number="7">ದಣಿದವನಿಗೆ ನೀ ಕೊಡಲಿಲ್ಲ ಪಾನ ಹಸಿದವನಿಗೆ ಬಡಿಸಲಿಲ್ಲ ಅನ್ನ.</verse>
				<verse number="8">ನಿನ್ನನಿಸಿಕೆಯಂತೆ ಬಲಿಷ್ಠನಿಗೆ ನಾಡಿನೊಡೆತನ ಘನವಂತನಿಗೇ ಅಲ್ಲಿ ಮನೆತನ</verse>
				<verse number="9">ವಿಧವೆಯರನ್ನು ಬರಿಗೈಯಲ್ಲಿ ಕಳಿಸಿಬಿಟ್ಟೆ ತಬ್ಬಲಿಯ ಕೈಗಳನು ನೀನು ಮುರಿದುಬಿಟ್ಟೆ.</verse>
				<verse number="10">ನಿನ್ನ ಸುತ್ತಲು ಉರುಲುಗಳು ಕಾದಿವೆ ಈ ಕಾರಣ ನಿನ್ನನು ತಲ್ಲಣಗೊಳಿಸಲಿದೆ ಭಯಭ್ರಾಂತಿ ತಟ್ಟನೆ.</verse>
				<verse number="11">ನಿನಗೆ ದಾರಿಕಾಣದಿರಲು ಬೆಳಕೇ ಕತ್ತಲಾಗಿದೆ ನಿನ್ನನು ಮುಳುಗಿಸಲು ಜಲಪ್ರವಾಹವಿದೆ.</verse>
				<verse number="12">ದೇವರು ಉನ್ನತ ಆಕಾಶದಲ್ಲಿ ಇದ್ದಾನಲ್ಲವೇ? ನಕ್ಷತ್ರಗಳನ್ನು ನೋಡು, ಎಷ್ಟು ಗಹನವಾಗಿವೆ!</verse>
				<verse number="13">ಈ ನಿಮಿತ್ತ ನೀನು, ‘ದೇವರಿಗೇನು ಗೊತ್ತು? ನ್ಯಾಯ ತೀರಿಸಬಲ್ಲನೆ ಕಾರ್ಗತ್ತಲು ಅಡ್ಡವಿರಲು?</verse>
				<verse number="14">ಆತ ನೋಡಲಾಗದಂತೆ ದಟ್ಟವಾದ ಮೋಡಗಳ ಪರದೆ ಇದೆ ಆತನ ನಡೆದಾಟವೆಲ್ಲ ಆಕಾಶದ ಮೇಲ್ಗಡೆಯಲ್ಲವೆ?’ ಎಂದೆ.</verse>
				<verse number="15">ನೀನು ಹಿಡಿದಿರುವುದು ಪುರಾತನ ಹಾದಿಯನೇ ದುರ್ಜನರು ನಡೆದುಬಂದ ಆ ಬೀದಿಯನೇ.</verse>
				<verse number="16">ಅವರನ್ನು ಅಕಾಲ ಮರಣ ಅಪಹರಿಸಿತು ಅವರಿಗಿದ್ದ ಅಡಿಪಾಯ ನೀರುಪಾಲಾಯಿತು.</verse>
				<verse number="17">ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದ್ದರೂ ಅವರು ಆತನಿಗೆ, ‘ತೊಲಗಿಹೋಗು ನಮ್ಮಿಂದ’ ಎಂದರು.</verse>
				<verse number="18">ಅಲ್ಲದೆ, ‘ಸರ್ವಶಕ್ತ ನಮಗೇನು ಮಾಡಬಲ್ಲ?’ ಎಂದುಕೊಂಡರು ಅಕಟ, ನನ್ನಿಂದ ದೂರ ಇರಲಿ! ದುರುಳರ ಈ ಮಾತು.</verse>
				<verse number="19">ದುರುಳರ ದುರ್ಗತಿಯನು ನೋಡಿ ಸಜ್ಜನರು ಹಿಗ್ಗುವರು ನಿರ್ದೋಷಿಗಳು ಅವರನು ಈ ಪರಿ ಅಣಕಿಸಿ ಹಾಸ್ಯಮಾಡುವರು:</verse>
				<verse number="20">‘ನೋಡಿ, ನಮ್ಮ ವೈರಿಗಳು ಹೇಗೆ ಹಾಳಾಗಿಹೋದರು! ಅವರು ಬಿಟ್ಟುಹೋದ ಆಸ್ತಿ ಬೆಂಕಿಯಿಂದ ಭಸ್ಮವಾಯಿತು!’</verse>
				<verse number="21">ದೇವರ ಚಿತ್ತಕ್ಕೆ ಮಣಿದು ಸಮಾಧಾನದಿಂದಿರು ಇದರಿಂದ ನಿನಗೆ ಶುಭವಾಗುವುದು.</verse>
				<verse number="22">ಆತನ ಬಾಯಿಂದ ಬುದ್ಧಿ ಕಲಿತುಕೊ ಆತನ ಮಾತನು ಹೃದಯದಲ್ಲಿಟ್ಟುಕೊ.</verse>
				<verse number="23">ಸರ್ವಶಕ್ತನ ಕಡೆಗೆ ಹಿಂದಿರುಗಿದೆಯಾದರೆ ನಿನ್ನ ಗುಡಾರಗಳಿಂದ ಅನ್ಯಾಯವನು ತೊರೆದೆಯಾದರೆ, ನೀನು ಉದ್ಧಾರವಾಗುವೆ.</verse>
				<verse number="24">ಎಸೆದುಬಿಡು ನಿನ್ನ ಬಂಗಾರವನು ಧೂಳಿಗೆ ಓಫಿರ್ ನಾಡಿನ ಅಪರಂಜಿಯನು ನದಿತೀರದ ಕಲ್ಲುಗಳಿಗೆ.</verse>
				<verse number="25">ಸರ್ವಶಕ್ತನಾದ ಸ್ವಾಮಿಯೇ ನಿನಗೆ ಬಂಗಾರವಾಗಿರಲಿ ಆತನೇ ನಿನಗೆ ಬೆಳ್ಳಿಯ ರಾಶಿಯಾಗಿರಲಿ.</verse>
				<verse number="26">ಆಗ ನೀನು ಸರ್ವಶಕ್ತನಲಿ ಆನಂದಿಸುವೆ ತಲೆಯೆತ್ತಿ ದೇವರಿಗೆ ಅಭಿಮುಖಿಯಾಗುವೆ.</verse>
				<verse number="27">ಆತನನು ಪ್ರಾರ್ಥಿಸುವೆ, ಆತ ಆಲಿಸುವನು ತೀರಿಸುವೆ ಆತನಿಗೆ ನೀ ಹೊತ್ತ ಹರಕೆಗಳನು.</verse>
				<verse number="28">ನಿನ್ನ ಯೋಜನೆಗಳು ಸಫಲವಾಗುವುವು ನಿನ್ನ ಮಾರ್ಗಗಳು ಪ್ರಜ್ವಲಿಸುವುವು.</verse>
				<verse number="29">ದೇವರು ಕೆಳಕ್ಕೆ ದಬ್ಬುತ್ತಾನೆ ಗರ್ವಿಗಳನು ಉದ್ಧರಿಸುತ್ತಾನೆ ದೀನಮನಸ್ಕರನು.</verse>
				<verse number="30">ಆತ ವಿಮೋಚಿಸುತ್ತಾನೆ ನಿರ್ದೋಷಿಗಳನು ನಿನ್ನ ಕೈ ಶುದ್ಧವಿರಲಿ ವಿಮೋಚಿಸುವನು ನಿನ್ನನು.</verse>
			</chapter>
			<chapter number="23">
				<verse number="1">ಆಗ ಯೋಬನು</verse>
				<verse number="2">“ನನ್ನ ದುಃಖಪ್ರಲಾಪ ಈಗಲೂ ಕಟುವಾಗಿದೆ ನಾನು ನಿಟ್ಟುಸಿರಿಡುವಾಗಲೂ ದೇವರ ಹಸ್ತ ಭಾರವಾಗಿದೆ.</verse>
				<verse number="3">ಆಹಾ! ಆತನ ದರ್ಶನ ನನಗೆ ದೊರಕುವುದೆಲ್ಲಿ? ನಾನು ಸೇರಬಹುದಿತ್ತಲ್ಲಾ ಆತನ ಸನ್ನಿಧಿಯಲ್ಲಿ!</verse>
				<verse number="4">ನನ್ನ ನ್ಯಾಯವನ್ನು ಆತನ ಮುಂದೆ ವಿವರಿಸಬಹುದಿತ್ತು ಬಾಯ್ತುಂಬಾ ಆತನೊಡನೆ ವಾದಿಸಬಹುದಿತ್ತು.</verse>
				<verse number="5">ಆತನ ಹೇಳಿಕೆಗಳನ್ನು ವಿವೇಚಿಸಬಹುದಿತ್ತು ಆತನ ಪ್ರತ್ಯುತ್ತರಗಳನ್ನು ತಿಳಿದುಕೊಳ್ಳಬಹುದಾಗಿತ್ತು.</verse>
				<verse number="6">ಆತ ನನ್ನೊಡನೆ ವ್ಯಾಜ್ಯವಾಡುವನೋ ಶಕ್ತಿಸಾಮರ್ಥ್ಯದಿಂದ? ಇಲ್ಲ, ಆಲಿಸುವನು ನನ್ನ ವಿಜ್ಞಾಪನೆಯನು ಗಮನದಿಂದ.</verse>
				<verse number="7">ಅಲ್ಲಿ ಸಜ್ಜನನಿಗೆ ಮಾತ್ರ ವಾದಿಸಲು ಸಾಧ್ಯ. ನಿತ್ಯವಾದ ಬಿಡುಗಡೆ ಆ ನ್ಯಾಯಾಧೀಶನಿಂದ ನನಗೆ ಲಭ್ಯ.</verse>
				<verse number="8">ಮುಂದೆ ಹೋದರೂ ದೇವರು ನನಗೆ ಕಾಣಸಿಗನಯ್ಯಾ ಹಿಂದೆ ಬಂದರೂ ಆತ ನನಗೆ ಕಾಣಸಿಗುವುದಿಲ್ಲವಯ್ಯಾ!</verse>
				<verse number="9">ಎಡಗಡೆ ಹುಡುಕಿದರೂ ನೋಡಲಾಗದಯ್ಯಾ ಬಲಗಡೆ ತಿರುಗಿದರೂ ಗೋಚರವಾಗದಯ್ಯಾ!</verse>
				<verse number="10">ಆತನಾದರೊ ಬಲ್ಲ ನಾನು ಹಿಡಿವ ದಾರಿಯನು ಆತ ನನ್ನನು ಶೋಧಿಸಿದರೆ ಚೊಕ್ಕ ಬಂಗಾರವಾಗುವೆನು.</verse>
				<verse number="11">ಆತನ ಹೆಜ್ಜೆಯ ಜಾಡಿನಲ್ಲೆ ನಾನು ಕಾಲಿಟ್ಟೆ ಓರೆಯಾಗದೆ ಆತನ ದಾರಿಯನ್ನೇ ಹಿಡಿದೆ.</verse>
				<verse number="12">ನಾ ಬಿಟ್ಟಗಲಲಿಲ್ಲ ಆತನ ತುಟಿಯಿಂದ ಹೊರಟ ಆಜ್ಞೆಗಳನು ನನ್ನೆದೆಯಲಿ ನಿಧಿಯಾಗಿಟ್ಟೆ ಆತನ ಬಾಯಿಂದ ಬಂದ ಮಾತುಗಳನ್ನು.</verse>
				<verse number="13">ಆತನದು ಏಕಚಿತ್ತ; ಅದನು ಬದಲಾಯಿಸಲಸಾಧ್ಯ ಆತ ಬಯಸಿದ್ದೆ ಸಿದ್ಧಿಯಾದಕಾರ್ಯ.</verse>
				<verse number="14">ನನಗೆ ವಿಧಿತವಾದುವುಗಳನೆ ಕಾರ್ಯಗೊಳಿಸುತ್ತಾನೆ ಈ ಪರಿಯ ಹಲವಾರು ಯೋಜನೆಗಳು ಆತನಲ್ಲಿವೆ.</verse>
				<verse number="15">ಈ ಕಾರಣ ಆತನ ಸನ್ನಿಧಿಯಲಿ ನಾನು ಅಂಜುಬುರುಕ ಇದನ್ನು ನೆನೆದು ಮನದಲಿ ನಾನು ಭಯಪೀಡಿತ.</verse>
				<verse number="16">ದೇವರೇ ನನ್ನ ಶಕ್ತಿಯನು ಕುಂದಿಸಿಹನು ಸರ್ವಶಕ್ತ ನನ್ನನು ಆತಂಕಗೊಳಿಸಿಹನು.</verse>
				<verse number="17">ನನ್ನ ವಿನಾಶಕ್ಕೆ ಈ ಅಂಧಕಾರವು ನಿಮಿತ್ತವಲ್ಲ ನನ್ನ ಮುಖಕ್ಕೆ ಕವಿದಿರುವ ಈ ಕಾರ್ಗತ್ತಲು ಕಾರಣವಲ್ಲ.</verse>
			</chapter>
			<chapter number="24">
				<verse number="1">ಸರ್ವಶಕ್ತಸ್ವಾಮಿ ಕಾಲರಾಶಿಯನ್ನೇಕೆ ನೇಮಿಸಿಟ್ಟುಕೊಂಡಿಲ್ಲ? ಆತನನ್ನು ಅರಿತವರಿಗೆ ಆತನ ದಿನಗಳೇಕೆ ಗೋಚರವಾಗುವುದಿಲ್ಲ?</verse>
				<verse number="2">ಎಲ್ಲೆ ಮೇರೆಗಳನ್ನು ಸರಿಸಿಕೊಳ್ಳುವವರುಂಟು ಅಪಹರಿಸಿಕೊಂಡ ದನಕುರಿಗಳನ್ನು ಸಾಕಿಕೊಳ್ಳುವವರುಂಟು.</verse>
				<verse number="3">ಅನಾಥರ ಕತ್ತೆಗಳನು ಹೊಡೆದುಕೊಂಡು ಹೋಗುತ್ತಾರೆ ವಿಧವೆಯರ ಎತ್ತುಗಳನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.</verse>
				<verse number="4">ದಿಕ್ಕಿಲ್ಲದವರನು ದಾರಿತಪ್ಪಿಸುತ್ತಾರೆ ನಾಡಿನ ಬಡವರನು ಅಡಗಿಸಿಬಿಡುತ್ತಾರೆ.</verse>
				<verse number="5">ಆ ಬಡವರ ಪಾಡು ಅಡವಿಯ ಕಾಡುಕತ್ತೆಗಳಿಗೆ ಸಮಾನ ಹೊಟ್ಟೆಪಾಡಿಗಾಗಿ ಕೂಳನ್ನು ಹುಡುಕುತ್ತಾರೆ ಬೆಳಗಿನಿಂದ ಅವರ ಮಕ್ಕಳಿಗೆ ಆಹಾರ ಒದಗಿಸುತ್ತದೆ ಅರಣ್ಯ.</verse>
				<verse number="6">ಹೊಟ್ಟೆಗಾಗಿ ಸೊಪ್ಪುಸದೆ ಕೊಯ್ದುಕೊಳ್ಳುತ್ತಾರೆ ಬಯಲಿನಲಿ ಹಕ್ಕಲನ್ನು ಆಯ್ದುಕೊಳ್ಳುತ್ತಾರೆ ದುಷ್ಟನ ದ್ರಾಕ್ಷಿತೋಟದಲಿ.</verse>
				<verse number="7">ಬೆತ್ತಲೆಯಾಗಿ ಮಲಗುತ್ತಾರೆ ಬಟ್ಟೆಯಿಲ್ಲದೆ ಚಳಿಗಾಲವನ್ನು ಕಳೆಯುತ್ತಾರೆ ಹೊದಿಕೆಯಿಲ್ಲದೆ.</verse>
				<verse number="8">ಮಲೆನಾಡಿನ ಭಾರಿಮಳೆಯಿಂದ ನೆನೆದುಹೋಗುತ್ತಾರೆ ಮರೆಯಿಲ್ಲದೆ ಕಲ್ಲುಬಂಡೆಗಳನು ಆಶ್ರಯಿಸುತ್ತಾರೆ.</verse>
				<verse number="9">ತಂದೆಯಿಲ್ಲದ ಮಗುವನು ಕಿತ್ತುಕೊಳ್ಳುತ್ತಾರೆ ತಾಯಮೊಲೆಯಿಂದ ಮಕ್ಕಳನು ಅಡವಾಗಿ ಪಡೆಯುತ್ತಾರೆ ಬಡವರಿಂದ.</verse>
				<verse number="10">ಬಡವರೋ ಬಟ್ಟೆಯಿಲ್ಲದೆ ಅಲೆಯುತ್ತಾರೆ ಬೆತ್ತಲೆಯಾಗಿ ಸಿವುಡುಗಳನ್ನು ಹೊರುತ್ತಾರೆ ಹಸಿದವರಾಗಿ.</verse>
				<verse number="11">ದಾಹಗೊಂಡೇ ದ್ರಾಕ್ಷಿಯನ್ನು ತುಳಿಯುತ್ತಾರೆ ತೊಟ್ಟಿಗಳಲ್ಲಿ ಎಣ್ಣೆಗಾಣವನ್ನು ಆಡಿಸುತ್ತಾರೆ ಕೋಟೆಗಳಲ್ಲಿ.</verse>
				<verse number="12">ನಗರಗಳಲ್ಲಿ ನರಳುವವರಿದ್ದಾರೆ ಗಾಯಗೊಂಡವರು ಮೊರೆಯಿಡುತ್ತಾರೆ ಆದರೆ ದೇವರು ಕಿವಿಗೊಡದಿದ್ದಾನೆ.</verse>
				<verse number="13">ಬೆಳಕನ್ನು ಪ್ರತಿಭಟಿಸುವವರಿದ್ದಾರೆ ಅದರ ಮಾರ್ಗವನ್ನು ತಿಳಿಯದೆ ಅದರ ಹಾದಿಯನ್ನು ಕೈಗೊಳ್ಳದೆ.</verse>
				<verse number="14">ಕೊಲೆಪಾತಕ ಏಳುತ್ತಾನೆ ಮುಂಜಾನೆಯೇ ದೀನದಲಿತರನ್ನು ಕೊಂದುಹಾಕುತ್ತಾನೆ ರಾತ್ರಿಯಲ್ಲಿ ವರ್ತಿಸುತ್ತಾನೆ ಕಳ್ಳನಂತೆ.</verse>
				<verse number="15">ವ್ಯಭಿಚಾರಿ ಸಂಜೆಯನೇ ಎದುರು ನೋಡುತ್ತಿರುತ್ತಾನೆ ಯಾರೂ ತನ್ನನ್ನು ಕಾಣದಂತೆ ಮುಖಕ್ಕೆ ಮುಸುಕು ಹಾಕಿಕೊಳ್ಳುತ್ತಾನೆ.</verse>
				<verse number="16">ಕಳ್ಳರು ಕತ್ತಲಲ್ಲಿ ಮನೆಗೆ ನುಗ್ಗುತ್ತಾರೆ ಕನ್ನ ಕೊರೆದು ಬೆಳಕು ಕಾಣದೆ ಇರುತ್ತಾರೆ ಹಗಲಲ್ಲಿ ಅವಿತುಕೊಂಡು.</verse>
				<verse number="17">ಅಂಥವರಿಗೆ ಕಾರ್ಗತ್ತಲೇ ಬೆಳಗಿನ ಜಾವ ಕಾರ್ಗತ್ತಲಿನ ಅಪಾಯಗಳೇ ಅವರಿಗೆ ಪರಿಚಯ.</verse>
				<verse number="18">“ದುರುಳನನು ಕೊಚ್ಚಿಕೊಂಡುಹೋಗುವುದು ಪ್ರವಾಹ ಪೊಡವಿಯಲ್ಲಿನ ಅವನ ಆಸ್ತಿ ಶಾಪಗ್ರಸ್ತ ಅವನು ದ್ರಾಕ್ಷಿತೋಟಗಳ ಕಡೆಗೂ ಸುಳಿಯಲಾರ.</verse>
				<verse number="19">ಬರಗಾಲ-ಬೇಸಿಗೆ ಹಿಮವನು ಹೀರಿಕೊಳ್ಳುವಂತೆ ಪಾತಾಳದ ಕೂಪ ಪಾಪಿಯನು ಸೆಳೆದುಕೊಳ್ಳುತ್ತದೆ.</verse>
				<verse number="20">ಹೆತ್ತಕರುಳೇ ಅವನನು ಮರೆತುಬಿಡುವುದು ಹುಳು ಅವನ ಹೆಣವನು ಆಸೆಯಿಂದ ಕಬಳಿಸುವುದು. ಇನ್ನು ಅವನ ನೆನಪು ಯಾರಿಗೂ ಇರದು ಅಕ್ರಮವು ಮುರಿದುಬಿದ್ದ ಮರದಂತಾಗುವುದು.</verse>
				<verse number="21">ಮಕ್ಕಳಿಲ್ಲದ ಬಂಜೆಯನ್ನು ಅವನು ಬಾಧಿಸಿದ ವಿಧವೆಯರನು ಉದ್ಧರಿಸದೇ ಹೋದ.</verse>
				<verse number="22">ದೇವರಂತು ತನ್ನ ಶಕ್ತಿಯಿಂದ ಬಲಿಷ್ಠರನ್ನು ಉಳಿಸುತ್ತಾನೆ ತಮ್ಮ ಜೀವ ಇನ್ನುಳಿಯದು ಎಂದಿದ್ದರೂ ಅವರು ಉದ್ಧಾರವಾಗುತ್ತಾರೆ.</verse>
				<verse number="23">ಅವರು ಆಧರಿಸಿ ನಿಂತಿರುವುದು ದೇವರಿತ್ತ ಅಭಯದ ನಿಮಿತ್ತ ಆತನ ಕಟಾಕ್ಷ ಅವರ ಮಾರ್ಗದತ್ತ.</verse>
				<verse number="24">ಅವರು ಮೇಲೇರಿ ಮಾಯವಾಗುತ್ತಾರೆ ಕೊಂಚಕಾಲದ ಮೇಲೆ ಕೊಯ್ಯಲ್ಪಡುತ್ತಾರೆ ಸುಗ್ಗಿಯ ತೆನೆಗಳಂತೆ ಕೂಡಿಸಲ್ಪಡುತ್ತಾರೆ ಕೆಳಗೆ ಬಿದ್ದ ಕಾಳಿನಂತೆ.</verse>
				<verse number="25">ಈ ಮಾತು ಅಬದ್ಧವೆಂದು ಯಾರು ಸ್ಥಾಪಿಸಬಲ್ಲರು? ನಾನು ಸುಳ್ಳುಗಾರನೆಂದು ನಿಮ್ಮಲ್ಲಿ ಯಾರು ತೋರಿಸಬಲ್ಲನು?”</verse>
			</chapter>
			<chapter number="25">
				<verse number="1">ಬಳಿಕ ಶೂಹ್ಯನಾದ ಬಿಲ್ದದನು ಹೀಗೆಂದನು:</verse>
				<verse number="2">“ದೇವರು ಮಹೋನ್ನತ ಪ್ರಭು; ಭಯಭಕ್ತಿಗೆ ಪಾತ್ರನು ಉನ್ನತಲೋಕದಲ್ಲಿ ಶಾಂತಿಸಮಾಧಾನವನು ಸ್ಥಾಪಿಸಿಹನು.</verse>
				<verse number="3">ಲೆಕ್ಕವಿದೆಯೇ ಆತನ ಸೇನೆಗಳಿಗೆ? ಆತನ ತೇಜಸ್ಸು ಮೂಡದಿರುವುದು ಯಾರಿಗೆ?</verse>
				<verse number="4">ನರನು ದೇವರ ದೃಷ್ಟಿಯಲ್ಲಿ ಸಜ್ಜನನಾಗಿರಲು ಸಾಧ್ಯವೆ? ಸ್ತ್ರೀಯರಲ್ಲಿ‌ ಹುಟ್ಟಿದವನು ಪರಿಶುದ್ಧನಾಗಿರುವುದು ಶಕ್ಯವೆ?</verse>
				<verse number="5">ಆತನ ದೃಷ್ಟಿಗೆ ಚಂದ್ರನೂ ಕಾಂತಿಯುತನಲ್ಲ ನಕ್ಷತ್ರಗಳೂ ನಿರ್ಮಲವಾದವುಗಳಲ್ಲ.</verse>
				<verse number="6">ಇಂತಿರಲು ಹುಳುವಿನಂಥ ನರನು ಏತರವನು? ಕ್ರಿಮಿಯಂಥ ನರನು ಎಷ್ಟುಮಾತ್ರದವನು?”</verse>
			</chapter>
			<chapter number="26">
				<verse number="1">ಆಗ ಯೋಬನು ಹೀಗೆ ಉತ್ತರಕೊಟ್ಟನು:</verse>
				<verse number="2">“ನಿಶ್ಯಕ್ತನಿಗೆ ನಿನ್ನಿಂದ ಮಹದುಪಕಾರವಾಯಿತು ದುರ್ಬಲವಾದ ಕೈಗಳಿಗೆ ಮಹಾ ನೆರವು ದೊರಕಿತು!</verse>
				<verse number="3">ಮಂದಮತಿಯಾದವನಿಗೆ ಎಷ್ಟೋ ಬುದ್ಧಿ ಹೇಳಿರುವೆ ಸುಜ್ಞಾನವನ್ನು ಬಹಳವಾಗಿ ಬೋಧನೆಮಾಡಿರುವೆ!</verse>
				<verse number="4">ಆ ಮಾತುಗಳನ್ನು ನಿನಗೆ ಕಲಿಸಿದವರಾರು? ಈ ನುಡಿಗಳಿಂದ ನಿನ್ನನು ಪ್ರೇರೇಪಿಸಿದ ಪುಣ್ಯಾತ್ಮನಾರು?</verse>
				<verse number="5">	 ಬಿಲ್ದದನು: ಜಲಚರಗಳಿಂದ ತುಂಬಿದ ಸಾಗರದ ಕೆಳಗಿನ ಲೋಕದೊಳು (ದೇವರ ಭಯದಿಂದ) ಯಾತನೆಪಡುತ್ತಿವೆ ಪ್ರೇತಗಳು.</verse>
				<verse number="6">ಪಾತಾಳ ತೆರೆದಿದೆ ದೇವರ ದೃಷ್ಟಿಗೆ ಅಧೋಲೋಕ ಮರೆಯಾಗಿಲ್ಲ ಆತನಿಗೆ.</verse>
				<verse number="7">ಉತ್ತರ ದಿಕ್ಕನ್ನು ವಿಸ್ತರಿಸಿಹನು ಶೂನ್ಯದ ಮೇಲೆ ಭೂಮಂಡಲವನ್ನು ತೂಗುಹಾಕಿಹನು ಏನೂ ಇಲ್ಲದರ ಮೇಲೆ.</verse>
				<verse number="8">ಮೇಘಗಳನ್ನು ನೀರಿನಿಂದ ತುಂಬಿಸಿಹನು ಮೋಡ ಅದರ ಭಾರದಿಂದ ಒಡೆದುಹೋಗದು.</verse>
				<verse number="9">ಪೂರ್ಣಚಂದ್ರನನ್ನು ಮರೆಮಾಡುತ್ತಾನೆ ಅದರ ಮುಂದೆ ಮೋಡ ಕವಿಸುತ್ತಾನೆ.</verse>
				<verse number="10">ಬೆಳಕು-ಕತ್ತಲು ಸಂಧಿಸುವ ಸ್ಥಾನದಲಿ ಮೇರೆಹಾಕಿದ್ದಾನೆ ಸಮುದ್ರದ ಸುತ್ತಲಲಿ.</verse>
				<verse number="11">ಆಕಾಶಮಂಡಲದ ಸ್ತಂಭಗಳು ಕದಲುವುವು ಆತನ ಗದರಿಕೆಗೆ ಅವುಗಳು ಬೆರಗಾಗುವುವು.</verse>
				<verse number="12">ಸಮುದ್ರವನು ಭೇದಿಸುತ್ತಾನೆ ಪರಾಕ್ರಮದಿಂದ ಘಟಸರ್ಪವನೂ ಹೊಡೆದು ಹಾಕುತ್ತಾನೆ ವಿವೇಕಶಕ್ತಿಯಿಂದ.</verse>
				<verse number="13">ಆತನ ಶ್ವಾಸ ಶುಭ್ರವಾಗಿಸುತ್ತದೆ ಆಕಾಶಮಂಡಲವನು ಆತನ ಹಸ್ತ ಇರಿಯುತ್ತದೆ ಹರಿದೋಡುವ ಸರ್ಪವನು.</verse>
				<verse number="14">ದೇವರ ಅದ್ಭುತಗಳಲ್ಲಿ ಇವು ಕೆಲವು ಮಾತ್ರ ಆತನ ಬಗ್ಗೆ ನಾವು ಕೇಳಿರುವುದು ಕಿಂಚಿತ್ತು ಮಾತ್ರ ಆತನ ಘನ ಗರ್ಜನೆಯ ಪ್ರಾಬಲ್ಯವನ್ನು ಗ್ರಹಿಸಲು ಯಾರಿಂದ ಸಾಧ್ಯ?”</verse>
			</chapter>
			<chapter number="27">
				<verse number="1">ಯೋಬನು ಮತ್ತೆ ಪ್ರಸ್ತಾಪವೆತ್ತಿ ಹೀಗೆಂದನು:</verse>
				<verse number="2">“ನನಗೆ ನ್ಯಾಯ ದೊರಕಿಸದ ಜೀವಂತ ದೇವರಾಣೆ, ನನ್ನ ಮನಸ್ಸನು ಕಹಿಯಾಗಿಸಿದ ಸರ್ವಶಕ್ತನಾಣೆ.</verse>
				<verse number="3">ನನ್ನಲ್ಲಿ ಜೀವ ಉಸಿರಾಡುತ್ತಿರುವವರೆಗೆ, ನನ್ನ ಮೂಗಲ್ಲಿ ದೇವರು ಊದಿದ ಶ್ವಾಸವಿರುವವರೆಗೆ,</verse>
				<verse number="4">ನನ್ನ ತುಟಿ ಅನ್ಯಾಯವನು ನುಡಿಯದು ನನ್ನ ನಾಲಿಗೆ ಎಷ್ಟುಮಾತ್ರಕ್ಕೂ ಮೋಸದ ಮಾತನಾಡದು.</verse>
				<verse number="5">ನೀವು ನ್ಯಾಯವಂತರೆಂದು ನಾನು ಒಪ್ಪಿದರೆ ನನಗಿರಲಿ ಧಿಕ್ಕಾರ! ನಾನು ಸತ್ಯತೆಯನ್ನು ಕಳೆದುಕೊಳ್ಳಲಾರೆ ಸಾಯುವ ತನಕ.</verse>
				<verse number="6">ನ್ಯಾಯನೀತಿಯನ್ನು ಬಿಡದೆ ಹಿಡಿವೆನು ಭದ್ರವಾಗಿ ನನ್ನ ಬಾಳಿನ ಯಾವ ದಿನದಂದೂ ನಿಂದಿಸಿದ್ದಿಲ್ಲ ನನ್ನ ಮನಸ್ಸಾಕ್ಷಿ.</verse>
				<verse number="7">ನನ್ನ ಹಗೆಗೆ ದುಷ್ಟತನ ಗತಿಯಾಗಲಿ ಅನೀತಿವಂತನ ಪಾಡು ನನ್ನ ವಿರೋಧಿಗೆ ಒದಗಲಿ.</verse>
				<verse number="8">ದೇವರೇ ದುಷ್ಟನ ಪ್ರಾಣ ತೆಗೆವ ಕಾಲಕ್ಕೆ ಅವನಿಗೆಲ್ಲಿಂದ ಬಂದೀತು ಭರವಸೆ!</verse>
				<verse number="9">ಅವನಿಗೆ ಕಷ್ಟದುಃಖ ಬಂದೊದಗಲು ದೇವರು ಆಲೈಸುವನೆ ಅವನ ಮೊರೆಯನು?</verse>
				<verse number="10">ಅವನು ಆನಂದಿಸುವನೆ ಸರ್ವಶಕ್ತನಲಿ? ಪ್ರಾರ್ಥನೆ ಮಾಡುವನೆ ಸರ್ವದಾ ಆತನಲಿ?</verse>
				<verse number="11">ದೇವರ ಹಸ್ತಬಲವನು ಕುರಿತು ಬೋಧಿಸುವೆನು ಸರ್ವಶಕ್ತನ ಯೋಜನೆಯನು ನಿಮಗೆ ಮರೆಮಾಚೆನು.</verse>
				<verse number="12">ಇಗೋ, ನೀವೆಲ್ಲರೂ ಇದನು ನೋಡಿದ್ದೀರಿ ಖುದ್ದಾಗಿ ಮತ್ತೆ ಏಕೆ ವಾದಿಸುತ್ತೀರಿ ವ್ಯರ್ಥವಾಗಿ?”</verse>
				<verse number="13">“ಹೀಗಿರುತ್ತವೆ ದುಷ್ಟನಿಗೆ ದೇವರಿಂದ ದೊರಕುವ ಪಾಲು ಹಿಂಸಾಚಾರಿಗೆ ಸರ್ವಶಕ್ತನಿಂದ ಸಿಗುವ ಸೊತ್ತು:</verse>
				<verse number="14">ಅವನಿಗೆ ಮಕ್ಕಳು ಹೆಚ್ಚಿದರೂ ಕತ್ತಿಗೆ ತುತ್ತಾಗುವರು ಅವನ ಸಂತತಿಯವರಿಗೆ ಊಟದ ಕೊರತೆ ತಪ್ಪದು.</verse>
				<verse number="15">ಅವನ ಮನೆಯವರಲ್ಲಿ ಉಳಿದವರು ಗುಳಿಸೇರುವರು ವ್ಯಾಧಿಯಿಂದ ಅವನ ವಿಧವೆಯರು ಅವನಿಗೆ ನೆರವಾಗುವರು ಉತ್ತರಕ್ರಿಯೆಗಳಿಂದ.</verse>
				<verse number="16">ಅವನು ಬೆಳ್ಳಿಯನ್ನು ಕೂಡಿಸಿಟ್ಟಿದ್ದರೂ ಧೂಳಿನಷ್ಟು, ವಸ್ತ್ರಗಳನು ಗುಡ್ಡೆ ಮಾಡಿಟ್ಟಿದ್ದರೂ ಮಣ್ಣಿನಷ್ಟು.</verse>
				<verse number="17">ಸಜ್ಜನರು ಧರಿಸಿಕೊಳ್ಳುವರು ಆ ವಸ್ತ್ರಗಳನು ನಿರ್ದೋಷಿಗಳು ಹಂಚಿಕೊಳ್ಳುವರು ಆ ಬೆಳ್ಳಿಯನು.</verse>
				<verse number="18">ಜೇಡರ ಹುಳದ ಗೂಡಿನಂತೆ ಕಾವಲುಗಾರನ ಗುಡಿಸಿಲಂತೆ ಬಡಕಲಾಗುವುದು ಅವನು ಕಟ್ಟಿಕೊಂಡ ಮನೆ.</verse>
				<verse number="19">ಅವನು ನಿದ್ರಿಸಹೋಗುತ್ತಾನೆ ಹಣವಂತನಾಗಿ ಕಣ್ಣು ತೆರೆಯುತ್ತಲೆ ಇಲ್ಲವಾಗಿರುತ್ತದೆ ಆಸ್ತಿ! ಮತ್ತೆ ಇರುತ್ತಾನೆ ನಿದ್ರೆ ಕಾಣದವನಾಗಿ</verse>
				<verse number="20">ವಿಪತ್ತುಗಳು ಅವನನ್ನು ಹಿಂದಟ್ಟಿ ಹಿಡಿಯುವುವು ಹೊಳೆಯಂತೆ ಬಿರುಗಾಳಿ ಅವನನ್ನು ಅಪಹರಿಸುವುದು ರಾತ್ರಿಯಲ್ಲೆ.</verse>
				<verse number="21">ಅವನು ತೂರಿಹೋಗದಿರನು ಮೂಡಣಗಾಳಿ ಬಡಿಯುವುದರಿಂದ ಅವನನ್ನು ಹೊಡೆದು ಹಾರಿಸಿಬಿಡುವುದು ಅವನಿರುವ ಜಾಗದಿಂದ,</verse>
				<verse number="22">ಅವನ ಮೇಲೆ ಅದು ಬೀಸುತ್ತದೆ ನಿರ್ದಾಕ್ಷಿಣ್ಯದಿಂದ ತಪ್ಪಿಸಿಕೊಳ್ಳಲು ಅವನು ಯತ್ನಿಸುತ್ತಾನೆ ಅದರ ಹೊಡೆತದಿಂದ.</verse>
				<verse number="23">ಜನರು ಹಾಸ್ಯಮಾಡುತ್ತಾರೆ ಚಪ್ಪಾಳೆ ತಟ್ಟಿ ಅವನನ್ನು ಹೊರಗಟ್ಟುತ್ತಾರೆ ಛೀಮಾರಿ ಹಾಕಿ.”</verse>
			</chapter>
			<chapter number="28">
				<verse number="1">“ಬೆಳ್ಳಿ ಸಿಕ್ಕುವ ಗಣಿಯುಂಟು ಚಿನ್ನದ ಅದುರು ದೊರಕುವ ಎಡೆಯುಂಟು.</verse>
				<verse number="2">ಕಬ್ಬಿಣವನ್ನು ತೆಗೆಯುತ್ತಾರೆ ಮಣ್ಣಿನಿಂದ ತಾಮ್ರವನ್ನು ಕಡೆಯುತ್ತಾರೆ ಕಲ್ಲನ್ನು ಕರಗಿಸುತಾ.</verse>
				<verse number="3">ಮಾನವರು ಹೊರದೂಡುತ್ತಾರೆ ಕತ್ತಲನು ಕತ್ತಲು-ಕಾರ್ಗತ್ತಲಲ್ಲೂ ಹುಡುಕುತ್ತಾರೆ ಲೋಹಗಳನು. ತೋಡುತ್ತಿರುತ್ತಾರೆ ಅವು ದೊರಕುವವರೆಗು.</verse>
				<verse number="4">ಗಣಿಯನ್ನು ತೋಡಿತೋಡಿ ಜನನಿವಾಸಿಗಳಿಗೆ ದೂರವಾಗಿ ಮೇಲ್ಗಡೆ ನಡೆದಾಡುವವರನ್ನು ಮರೆತುಹೋಗಿ ಅತ್ತಿತ್ತ ಅಲೆದಾಡುತ್ತಾರೆ ನರಲೋಕಕ್ಕೆ ಅನ್ಯರಾಗಿ.</verse>
				<verse number="5">ಭೂಮಿ ಕೊಡುತ್ತದೆ ಆಹಾರವನು ಬೆಂಕಿಬಿದ್ದಂತೆ ಪಾಳಾಗಿರುತ್ತದೆ ಅದರ ಅಡಿಭಾಗವು.</verse>
				<verse number="6">ನೀಲಿರತ್ನಗಳು ಸಿಗುತ್ತವೆ ಭುವಿಯ ಕಲ್ಲುಗಳಲಿ ಚಿನ್ನಚಿಗುರು ದೊರಕುತ್ತದೆ ಅದರ ಧೂಳಿನಲಿ.</verse>
				<verse number="7">ಆ ದಾರಿ ತಿಳಿಯದು ಯಾವ ಹದ್ದಿಗೂ ಅದು ಬಿದ್ದಿಲ್ಲ ಯಾವ ಗಿಡುಗದ ಕಣ್ಣಿಗೂ.</verse>
				<verse number="8">ಕಾಡುಮೃಗಗಳು ಅದನ್ನು ತುಳಿದಿಲ್ಲ ಸಿಂಹವು ಆ ಮಾರ್ಗದಲ್ಲಿ ಸುಳಿದಿಲ್ಲ.</verse>
				<verse number="9">ಮಾನವನು ಕೈಮಾಡುತ್ತಾನೆ ಬಂಡೆಗಳ ಮೇಲೆ ಬೆಟ್ಟಗಳನ್ನು ಕೆಡವಿಬಿಡುತ್ತಾನೆ ಬುಡಮಟ್ಟಕೆ.</verse>
				<verse number="10">ಸುರಂಗಗಳನ್ನು ಕೊರೆಯುತ್ತಾನೆ ಬಂಡೆಗಳಲಿ ಅಮೂಲ್ಯವಾದ ವಸ್ತುಗಳನ್ನು ಕಾಣುತ್ತಾನಲ್ಲಿ.</verse>
				<verse number="11">ಕಂಡುಹಿಡಿಯುತ್ತಾನೆ ನದಿಗಳ ಮೂಲಗಳನು ಬೆಳಕಿಗೆ ತರುತ್ತಾನೆ ಮರೆಯಾಗಿದ್ದ ವಸ್ತುಗಳನು.</verse>
				<verse number="12">ಆದರೆ ಸುಜ್ಞಾನ ಸಿಕ್ಕುವುದೆಲ್ಲಿ? ವಿವೇಕ ವಾಸಮಾಡುವುದೆಲ್ಲಿ?</verse>
				<verse number="13">ಸುಜ್ಞಾನದ ಕ್ರಯ ಯಾರಿಗೂ ಗೊತ್ತಿಲ್ಲ ಜೀವಿತರಲ್ಲಿ ಅದನ್ನು ಕಂಡವರಿಲ್ಲ.</verse>
				<verse number="14">‘ಅದು ನನ್ನಲ್ಲಿಲ್ಲ’ ಎನ್ನುತ್ತದೆ ಪಾತಾಳ ‘ನನ್ನ ಬಳಿಯಲ್ಲಿಲ್ಲ’ ಎನ್ನುತ್ತದೆ ಸಮುದ್ರ.</verse>
				<verse number="15">ಚೊಕ್ಕ ಬಂಗಾರಕೊಟ್ಟು ಅದನು ಕೊಂಡುಕೊಳ್ಳಲಾಗದು ಅದರ ಬೆಲೆಗೆ ಬೆಳ್ಳಿಯನು ತೂಕಮಾಡಲಾಗದು.</verse>
				<verse number="16">ಓಫೀರ್ ದೇಶದ ಅಪರಂಜಿಯಿಂದಲೂ ಅಮೂಲ್ಯ ಗೋಮೇಧಿಕ-ಇಂದ್ರನೀಲದಿಂದಲೂ ಸುಜ್ಞಾನದ ಮೌಲ್ಯವನ್ನು ಗೊತ್ತುಮಾಡಲಾಗದು.</verse>
				<verse number="17">ಹೊನ್ನಾಗಲಿ, ಗಾಜಾಗಲಿ ಅದಕ್ಕೆ ಸಮವಾದೀತೆ? ಚಿನ್ನಾಭರಣಗಳನ್ನು ಅದಕ್ಕೆ ಅದಲುಬದಲು ಮಾಡಿಕೊಡಲಾದೀತೆ?</verse>
				<verse number="18">ಸುಜ್ಞಾನವಿರುವಲ್ಲಿ ಹವಳ-ಸ್ಫಟಿಕಗಳು ನೆನಪಿಗೆ ಬಾರವು ಮಾಣಿಕ್ಯಗಳ ಸಂಪಾದನೆಗಿಂತ ಅದರ ಸಂಪಾದನೆ ಶ್ರೇಷ್ಠವು.</verse>
				<verse number="19">ಕೂಷ್ ದೇಶದ ಪುಷ್ಯರಾಗವು ಅದಕ್ಕೆ ಸಾಟಿಯಲ್ಲ ಶುದ್ಧ ಕನಕದೊಡನೆ ಅದನು ತೂಕಮಾಡಲಾಗುವುದಿಲ್ಲ.</verse>
				<verse number="20">ಇಂತಿರಲು ಸುಜ್ಞಾನ ಬರುವುದು ಎಲ್ಲಿಂದ? ವಿವೇಕ ದೊರಕುವುದು ಯಾವ ಸ್ಥಳದಿಂದ?</verse>
				<verse number="21">ಅದು ಎಲ್ಲ ಜೀವಿಗಳ ಕಣ್ಣಿಗೆ ಅಗೋಚರ ಆಕಾಶದ ಪಕ್ಷಿಗಳಿಗೂ ಅದು ಅಪರಿಚಿತ.</verse>
				<verse number="22">‘ನಮ್ಮ ಕಿವಿಗೆ ಬಿದ್ದಿದೆ ಅದರ ಸುದ್ದಿ ಮಾತ್ರ’ ಎನ್ನುತ್ತವೆ ಅಧೋಲೋಕ ಹಾಗು ಮೃತ್ಯುಲೋಕ.</verse>
				<verse number="23">ಸುಜ್ಞಾನದ ಮಾರ್ಗ ಬಲ್ಲವನು ದೇವರೇ ಅದರ ಸ್ಥಳಗೊತ್ತಿದೆ ಆತನೊಬ್ಬನಿಗೆ.</verse>
				<verse number="24">ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಬಲ್ಲವನು ದೇವರೇ ಆಕಾಶದ ಕೆಳಗಿನ ಸಮಸ್ತವನು ನೋಡಬಲ್ಲವನು ಆತನೊಬ್ಬನೇ!</verse>
				<verse number="25">ಗಾಳಿಗೆ ತಕ್ಕ ವೇಗವನು ನೇಮಿಸಿದಾಗ ಜಲಕ್ಕೆ ತಕ್ಕ ಜಾಗವನು ನಿರ್ಣಯಿಸಿದಾಗ,</verse>
				<verse number="26">ಮಳೆಗೆ ಕಟ್ಟಳೆಯನು ವಿಧಿಸಿದಾಗ ಗುಡುಗು ಮಿಂಚಿಗೆ ಮಾರ್ಗವನ್ನೇರ್ಪಡಿಸಿದಾಗ,</verse>
				<verse number="27">ದೇವರು ಆ ಜ್ಞಾನವನು ಕಂಡು ಪರಿಗಣಿಸಿದನು ಅದನು ಪರಿಶೋಧಿಸಿ ಪ್ರತಿಷ್ಠಾಪಿಸಿದನು.</verse>
				<verse number="28">ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”</verse>
			</chapter>
			<chapter number="29">
				<verse number="1">ಯೋಬನು ಮತ್ತೆ ಪ್ರಸ್ತಾಪವೆತ್ತಿ ಇಂತೆಂದನು:</verse>
				<verse number="2">ಕಳೆದುಹೋದ ದಿನಗಳಲಿ ಇದ್ದಂತೆ ಈಗಲೂ ಇದ್ದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತಲ್ಲವೆ! ಆಗ ದೇವರು ನನ್ನನ್ನು ಕಾಪಾಡುತ್ತಿದ್ದನಲ್ಲವೆ?</verse>
				<verse number="3">ಆಗ ಬೆಳಗುತ್ತಿತ್ತು ಆತನ ದೀಪ ತಲೆಯ ಮೇಲೆ ಇರುಳಲ್ಲೂ ಸಂಚರಿಸುತ್ತಿದ್ದೆ ಆತನ ಬೆಳಕಿನಲೇ.</verse>
				<verse number="4">ಆ ದಿನಗಳು ನನ್ನ ಜೀವಮಾನದ ಸುಗ್ಗಿಕಾಲವಾಗಿತ್ತು ದೇವರ ಪ್ರೀತಿ ನನ್ನ ಗುಡಾರವನ್ನು ಆವರಿಸಿತ್ತು.</verse>
				<verse number="5">ಸರ್ವಶಕ್ತನು ಆಗ ನನ್ನ ಸಂಗಡವಿದ್ದನು ನನ್ನ ಸುತ್ತಲೂ ನನ್ನ ಮಕ್ಕಳು ಇರುತ್ತಿದ್ದರು.</verse>
				<verse number="6">ಹಾಲುತುಪ್ಪದಲ್ಲಿ ಪಾದ ತೊಳೆಯುತ್ತಿದ್ದೆ ಎಣ್ಣೆಯನು ನದಿಯಂತೆ ಹರಿಸುತ್ತಿತ್ತಾ ದಿಣ್ಣೆ.</verse>
				<verse number="7">ನಾನು ಊರ ಮುಂದಿನ ಚಾವಡಿಗೆ ಹೋದಾಗ ಚೌಕದ ಪೀಠದಲ್ಲಿ ಕುಳಿತುಕೊಂಡಾಗ,</verse>
				<verse number="8">ಯುವಕರು ಸರಿಯುತ್ತಿದ್ದರು ಪಕ್ಕಕ್ಕೆ ಮುದುಕರು ಎದ್ದು ನಿಲ್ಲುತ್ತಿದ್ದರು ತಟ್ಟನೆ;</verse>
				<verse number="9">ಮಂತ್ರಿಗಳೂ ಕೈಯಿಟ್ಟು ಬಾಯ ಮೇಲೆ ಮೌನತಾಳುತ್ತಿದ್ದರು ಮಾತೆತ್ತದೆ;</verse>
				<verse number="10">ಗಣ್ಯ ವ್ಯಕ್ತಿಗಳೂ ನಿಶ್ಯಬ್ದವಾಗುತ್ತಿದ್ದರು ಅವರ ನಾಲಿಗೆ ಅಂಗುಳಕ್ಕೆ ಅಂಟಿರುತ್ತಿತ್ತು.</verse>
				<verse number="11">ಕೇಳಿದ ಕಿವಿ ನನ್ನನು ಧನ್ಯನೆನ್ನುತ್ತಿತ್ತು ನೋಡಿದ ಕಣ್ಣು ನನ್ನನು ಗೌರವಿಸುತ್ತಿತ್ತು.</verse>
				<verse number="12">ಏಕೆಂದರೆ ಮೊರೆಯಿಡುತ್ತಿದ್ದ ಬಡವನನು ಗತಿಯಿಲ್ಲದ ಅನಾಥನನು ಆದರಿಸುತ್ತಿದ್ದೆ ನಾನು.</verse>
				<verse number="13">ಸಾಯುತ್ತಿದ್ದವನು ಹರಸುತ್ತಿದ್ದುದು ನನ್ನನೇ ವಿಧವೆಯ ಹೃದಯ ನಲಿಯುವಂತೆ ಮಾಡುತ್ತಿದ್ದುದು ನಾನೇ.</verse>
				<verse number="14">ಧರ್ಮವನ್ನು ನಾನು ಧರಿಸಿಕೊಂಡೆ; ಅದು ನನಗೆ ಅಂಬರವಾಗಿತ್ತು ನ್ಯಾಯನೀತಿ ನನಗೆ ನಿಲುವಂಗಿಯೂ ಪೇಟವೂ ಆಗಿತ್ತು.</verse>
				<verse number="15">ಕುರುಡನಿಗೆ ನಾನು ಕಣ್ಣಾಗಿದ್ದೆ ಕುಂಟನಿಗೆ ನಾನು ಕಾಲಾಗಿದ್ದೆ.</verse>
				<verse number="16">ದರಿದ್ರನಿಗೆ ತಂದೆಯಾಗಿದ್ದೆ ಅಪರಿಚಿತರ ವ್ಯಾಜ್ಯವನು ತೀರಿಸುತ್ತಿದ್ದೆ.</verse>
				<verse number="17">ದುರ್ಜನರ ದವಡೆಯನು ಮುರಿಯುತ್ತಿದ್ದೆ. ಅವರ ಹಲ್ಲುಗಳಿಂದಲೂ ಬೇಟೆಯನು ಬಿಡಿಸುತ್ತಿದ್ದೆ.</verse>
				<verse number="18">ಆಗ ನಾನಿಂತೆಂದೆ: ‘ನನ್ನ ಗೂಡಿನಲ್ಲೇ ಹಾಯಾಗಿ ಸಾಯುವೆ ನನ್ನ ದಿನಗಳು ಮರಳಿನಂತೆ ಅಸಂಖ್ಯಾತವಾಗಿರುತ್ತವೆ.’</verse>
				<verse number="19">ನನ್ನ ಬೇರುಗಳು ನೀರಿನವರೆಗೆ ವ್ಯಾಪಿಸಿಕೊಂಡಿವೆ ನನ್ನ ರೆಂಬೆಗಳ ಮೇಲೆ ರಾತ್ರಿಯೆಲ್ಲ ಇಬ್ಬನಿ ಬಿದ್ದಿರುತ್ತದೆ.</verse>
				<verse number="20">‘ನನ್ನ ಪ್ರತಿಷ್ಠತೆ ಹೊಸಹೊಸದಾಗಿ ಇರುತ್ತದೆ ನನ್ನ ಕೈಯಲ್ಲಿ ಬಿಲ್ಲು ಬಲಗೊಳ್ಳುತ್ತಾ ಇರುತ್ತದೆ’</verse>
				<verse number="21">ಜನರು ನನ್ನ ಮಾತಿಗೆ ಕಿವಿಗೊಡಲು ಕಾದಿರುತ್ತಿದ್ದರು ನನ್ನಾಲೋಚನೆಯನು ಅರಿಯಲು ನಿಶ್ಯಬ್ದವಾಗಿರುತ್ತಿದ್ದರು.</verse>
				<verse number="22">ನಾನು ಮಾತಾಡಿದ ಮೇಲೆ ಅವರು ಮಾತೆತ್ತುತ್ತಿರಲಿಲ್ಲ ನನ್ನ ಮಾತು ಹನಿಹನಿಯಾಗಿ ಅವರ ಕಿವಿಗೆ ಬೀಳುತ್ತಿತ್ತು.</verse>
				<verse number="23">ನನ್ನನ್ನು ಮಳೆಯಂತೆ ಎದುರುನೋಡುತ್ತಿದ್ದರು ಮುಂಗಾರಿಗೋ ಎಂಬಂತೆ ಬಾಯ್ದೆರೆಯುತ್ತಿದ್ದರು.</verse>
				<verse number="24">ಅವರು ಎದೆಗೆಟ್ಟಾಗ ನಾನು ನಗೆಬೀರುತ್ತಿದ್ದೆ ನನ್ನ ಮುಖಕಾಂತಿಯಿಂದ ಹುರಿದುಂಬಿಸುತ್ತಿದ್ದೆ.</verse>
				<verse number="25">ನಾನು ಅವರಿಗೆ ಮಾರ್ಗದರ್ಶಕನಾಗಿದ್ದೆ ಸೇನೆಗಳ ಮಧ್ಯೆ ರಾಜನಂತೆ ಮಂಡಿಸಿದ್ದೆ ದುಃಖಿತರನು ಸುಧಾರಕನಂತೆ ಸಂತೈಸುತ್ತಿದ್ದೆ.</verse>
			</chapter>
			<chapter number="30">
				<verse number="1">“ಈಗಲಾದರೊ ನನಗಿಂತ ಚಿಕ್ಕವರು ನನ್ನನ್ನು ಪರಿಹಾಸ್ಯಮಾಡುತ್ತಾರೆ. ಇವರ ಹೆತ್ತವರು ನನ್ನ ಮುಂದೆ. ನಾಯಿಗಳೊಡನೆ ಇರಲೂ ಅಯೋಗ್ಯರು ಎಂದೆಣಿಸಿದ್ದೆ.</verse>
				<verse number="2">ಅವರ ಭುಜಬಲದಿಂದ ನನಗೇನಾಗುತ್ತಿತ್ತು? ಆಗ ಅವರ ಪುಷ್ಟಿಯು ಕುಗ್ಗಿಹೋಗಿತ್ತು!</verse>
				<verse number="3">ಕೊರತೆಯಿಂದ, ಬರದಿಂದ ಅವರು ಸೊರಗಿಹೋಗಿದ್ದರು ನಿನ್ನೆಯವರೆಗೂ ಹಾಳುಬೀಳಾದ ನೆಲವನ್ನು ನೆಕ್ಕುತ್ತಿದ್ದರು.</verse>
				<verse number="4">ಚಕ್ಕೋತ ಸೊಪ್ಪುಗಳನ್ನು ಪೊದೆಗಳಿಂದ ಕಿತ್ತು ತಿನ್ನುತ್ತಿದ್ದರು ಜಾಲಿಯ ಬೇರೇ ಅವರಿಗೆ ಆಹಾರವಾಗಿತ್ತು.</verse>
				<verse number="5">ಜನರು ಅವರನ್ನು ತಳ್ಳಿಬಿಟ್ಟಿದ್ದರು ಕಳ್ಳರನ್ನೋ ಎಂಬಂತೆ ಕೂಗಿ ಅಟ್ಟಿಬಿಟ್ಟಿದ್ದರು.</verse>
				<verse number="6">ವಾಸಮಾಡುತ್ತಿದ್ದರವರು ಭೀಕರ ಡೊಂಗರುಗಳಲಿ, ನೆಲದ ಬಿಲಗಳಲಿ, ಬಂಡೆಗಳ ಸಂದುಗಳಲ್ಲಿ.</verse>
				<verse number="7">ಅರಚಿಕೊಳ್ಳುತ್ತಿದ್ದರು ಪೊದೆಗಳ ನಡುವೆ ಕೂಡಿಕೊಳ್ಳುತ್ತಿದ್ದರು ಮುಳ್ಳುಗಿಡಗಳ ಕೆಳಗೆ.</verse>
				<verse number="8">ಮೂರ್ಖರ ಮಕ್ಕಳು, ನೀಚ ಜಾತಿಯವರು ನಾಡಿನಿಂದ ಹೊರದೂಡಲ್ಪಟ್ಟವರು ಅವರಾಗಿದ್ದರು.</verse>
				<verse number="9">ಅಂಥವರ ಲಾವಣಿಗೆ ನಾನೀಗ ಗುರಿಯಾದೆ ಅವರ ಕಟ್ಟುಕತೆಗಳಿಗೆ ಅಡ್ಡಹೆಸರಾದೆ.</verse>
				<verse number="10">ನನಗೆ ಅಸಹ್ಯಪಟ್ಟು ದೂರಸರಿಯುತ್ತಾರೆ ನನ್ನ ಮೇಲೆ ಉಗುಳುವುದಕ್ಕೂ ಹಿಂಜರಿಯದಿದ್ದಾರೆ.</verse>
				<verse number="11">ದೇವರು ನನ್ನ ಬಿಲ್ಲನು ಸಡಿಲಗೊಳಿಸಿ ಪೆಟ್ಟಿಗೀಡಾಗಿಸಿದ್ದಾರೆ ಅವರೋ ಕಡಿವಾಣವಿಲ್ಲದ ಕುದುರೆಗಳಂತೆ ನನ್ನ ಮುಂದಿದ್ದಾರೆ.</verse>
				<verse number="12">ಕಲಹಗಾರರು ಎದ್ದಿದ್ದಾರೆ ನನ್ನ ಬಲಗಡೆಗೆ ನನ್ನ ಕಾಲುಗಳನು ನೂಕುತ್ತಿದ್ದರೆ ಹಿಂದಕೆ ಸಂಚುಹೂಡುತ್ತಿದ್ದಾರೆ ನನ್ನನ್ನು ನಾಶಮಾಡಲಿಕೆ.</verse>
				<verse number="13">ನನ್ನ ಹಾದಿಯನು ಕಡಿದುಹಾಕಿದ್ದಾರೆ ನನ್ನ ಉಪದ್ರವವನ್ನು ಹೆಚ್ಚಿಸಿದ್ದಾರೆ ಅವರನ್ನು ತಡೆಯಲು ಯಾರೂ ಇಲ್ಲದಿದ್ದಾರೆ.</verse>
				<verse number="14">ಅಗಲವಾದ ಕೋಟೆಬಿರುಕುಗಳಲಿ ನುಗ್ಗಿಬರುತ್ತಿದ್ದಾರೆ ಹಾಳುಬೀಳಿನಲಿ ನಿಂತಿರುವ ನನ್ನ ಮೇಲೆ ಉರುಳಿಬೀಳಲಿದ್ದಾರೆ.</verse>
				<verse number="15">ಅಡ್ಡಿ ಆತಂಕಗಳು ನನ್ನನು ಸುತ್ತುವರೆದಿವೆ ನನ್ನ ಮಾನಮರ್ಯಾದೆ ತೂರಿಹೋಗುತ್ತಿದೆ ಗಾಳಿಯಂತೆ ನನ್ನ ಯೋಗಕ್ಷೇಮ ತೇಲಿಹೋಗುತ್ತಿದೆ ಮೋಡದಂತೆ.</verse>
				<verse number="16">ನನ್ನ ಮನ ಕರಗಿ ನೀರಾಗಿದೆ ಬಾಧೆಗಳು ನನ್ನನು ಬಿಗಿಹಿಡಿದಿವೆ.</verse>
				<verse number="17">ಇರುಳು ನನ್ನೆಲುಬುಗಳನು ಕೊರೆದು ಕೀಳುತ್ತಿದೆ ಸಂಕಟಗಳು ನನ್ನನು ಎಡೆಬಿಡದೆ ತಿನ್ನುತ್ತಿವೆ.</verse>
				<verse number="18">ನನ್ನ ಬಟ್ಟೆಯನು ಗಟ್ಟಿಯಾಗಿ ಹಿಡಿದಿದ್ದಾರೆ ಕೊರಳಪಟ್ಟಿಯಂತೆ ಹಿಸುಕಿ ಹಿಂಡುತ್ತಿದ್ದಾರೆ.</verse>
				<verse number="19">ನನ್ನನು ಕೆಸರಿನಲ್ಲಿ ಕೆಡವಿದ್ದಾರೆ ನನ್ನನು ಭಸ್ಮಕ್ಕೆ ಸಮಾನನನ್ನಾಗಿಸಿದ್ದಾರೆ.</verse>
				<verse number="20">ದೇವರೇ, ನಾನು ಮೊರೆಯಿಟ್ಟರೂ ಉತ್ತರಕೊಡದಿರುವೆ ನಾನೆದ್ದು ನಿಂತರೂ ನೀನು ಸುಮ್ಮನೆ ನೋಡುತ್ತಿರುವೆ.</verse>
				<verse number="21">ನನಗೆ ನೀನು ಕ್ರೂರನಾಗಿಬಿಟ್ಟಿರುವೆ ನಿನ್ನ ಭುಜಬಲದಿಂದ ಹಿಂಸಿಸುತ್ತಿರುವೆ.</verse>
				<verse number="22">ನನ್ನನು ಎತ್ತಿ ತೂರಿಬಿಟ್ಟಿರುವೆ ಬಿರುಗಾಳಿಗೆ ತೊಳಲಾಡುತ್ತಿರುವೆನು ತುಫಾನಿನ ಆರ್ಭಟಕ್ಕೆ.</verse>
				<verse number="23">ನನ್ನನು ಮರಣಕ್ಕೆ ಗುರಿಮಾಡುವೆಯೆಂದು ತಿಳಿದಿದೆ ಸಮಸ್ತಜೀವಿಗಳು ತೆರಳುವ ಮಂದಿರಕ್ಕೆ ಸೇರಿಸುವೆಯೆಂದು ಗೊತ್ತೇ ಇದೆ.</verse>
				<verse number="24">ಆದರೂ ಕೇಡಿಗೆ ಈಡಾದವನು ಕೈಚಾಚುವುದಿಲ್ಲವೆ ಸಹಾಯಕ್ಕಾಗಿ? ಆಪತ್ತಿಗೆ ಗುರಿಯಾದವನು ಕೂಗಿಕೊಳ್ಳುವುದಿಲ್ಲವೆ ನೆರವಿಗಾಗಿ?</verse>
				<verse number="25">ಕಷ್ಟಾನುಭವಿಯನು ಕಂಡು ನಾನು ಕಣ್ಣೀರಿಡಲಿಲ್ಲವೆ? ದಟ್ಟದರಿದ್ರರಿಗೋಸ್ಕರ ನಾನು ದುಃಖಪಡಲಿಲ್ಲವೆ?</verse>
				<verse number="26">ನಾನು ಒಳಿತನು ನಿರೀಕ್ಷಿಸಿದಾಗ ಕೇಡು ಬಂದೊದಗಿತು ಬೆಳಕನು ಎದುರು ನೋಡುವಾಗ ಕತ್ತಲು ಕವಿಯಿತು.</verse>
				<verse number="27">ಕರುಳು ಕುದಿಯುತ್ತಿದೆ ಅಶಾಂತಿಯಿಂದ ಬಂದೊದಗಿದೆ ನನಗೆ ಬಾಧೆಯ ದಿನ.</verse>
				<verse number="28">ಸಂತೈಸುವ ಸೂರ್ಯನಿಲ್ಲದೆ ಅಲೆಯುತ್ತಿರುವೆ ಮಂಕು ಕವಿದು ಅಂಗಲಾಚುತ್ತಿರುವೆ ಸಭೆಯ ಮಧ್ಯೆ ನಿಂತು.</verse>
				<verse number="29">ನರಿಗಳಿಗೆ ಸಹೋದರನಾಗಿರುವೆ ಗೂಬೆಗಳಿಗೆ ನಾನು ಗೆಳೆಯನಾಗಿರುವೆ.</verse>
				<verse number="30">ನನ್ನ ಚರ್ಮ ಉದುರುತ್ತಿದೆ ಕರ್ರಗಾಗಿ ನನ್ನೆಲುಬು ಉರಿಯುತ್ತಿದೆ ತಾಪಕ್ಕೊಳಗಾಗಿ.</verse>
				<verse number="31">ಅಳುವ ಧ್ವನಿ ಕೇಳಿಸುತ್ತಿದೆ ನನ್ನ ಕೊಳಲಿನಲಿ ಗೋಳಾಟದ ಸ್ವರವಿದೆ ನನ್ನ ಕಿನ್ನರಿಯಲಿ.”</verse>
			</chapter>
			<chapter number="31">
				<verse number="1">“ಕನ್ಯೆಯನು (ಕಾಮದೃಷ್ಟಿಯಿಂದ) ನೋಡೆನೆಂದು ಮಾಡಿಕೊಂಡಿರುವೆ ನನ್ನ ಕಣ್ಣುಗಳೊಡನೆ ಒಪ್ಪಂದವನು.</verse>
				<verse number="2">ಎಂಥ ಪಾಲನ್ನು ವಿಧಿಸಬಲ್ಲನು ದೇವರು ಮೇಲಣಲೋಕದಿಂದ? ಎಂಥ ಬಾಧ್ಯತೆಯನು ನೀಡಬಲ್ಲನು ಸರ್ವಶಕ್ತನು ಮಹೋನ್ನತದಿಂದ?</verse>
				<verse number="3">ದುರ್ಜನರಿಗೆ ವಿಪತ್ತು ಬರಮಾಡುತ್ತಾನಲ್ಲವೆ? ಕೇಡಿಗರಿಗೆ ಉಪದ್ರವ ಕೊಡುತ್ತಾನಲ್ಲವೆ?</verse>
				<verse number="4">ಆತ ನನ್ನ ನಡತೆಯನ್ನೂ ನೋಡುತ್ತಾನೆ; ನನ್ನ ಹೆಜ್ಜೆಗಳನ್ನೂ ಎಣಿಸುತ್ತಾನಲ್ಲವೆ?</verse>
				<verse number="5">ನಾನು ಕಪಟ ಮಾರ್ಗದಲಿ ನಡೆದಿದ್ದರೆ ಮೋಸವನ್ನು ಹಿಂಬಾಲಿಸಿ ಓಡಿದ್ದರೆ,</verse>
				<verse number="6">ತೂಗಿನೋಡಲಿ ನನ್ನನು ನ್ಯಾಯದ ತಕ್ಕಡಿಯಲಿ ಹೀಗೆ ನನ್ನ ಸತ್ಯತೆಯನು ದೇವರು ತಿಳಿದುಕೊಳ್ಳಲಿ.</verse>
				<verse number="7">ದಾರಿತಪ್ಪಿ ನಾನು ನಡೆದಿದ್ದರೆ ನನ್ನ ಹೃದಯ, ಕಣ್ಗಳನ್ನು ಹಿಂಬಾಲಿಸಿದ್ದರೆ ಕಲ್ಮಷ ನನ್ನ ಕೈಗೆ ಅಂಟಿಕೊಂಡಿದ್ದರೆ,</verse>
				<verse number="8">ನಾನು ಬಿತ್ತಿದ್ದನ್ನು ಮತ್ತೊಬ್ಬ ಉಣ್ಣಲಿ ನನ್ನ ಬೆಳೆಯು ಬುಡಮೇಲಾಗಲಿ.</verse>
				<verse number="9">ನನ್ನ ಹೃದಯ ಪರಸ್ತ್ರೀಗೆ ಮಾರುಹೋಗಿದ್ದರೆ ನೆರೆಯವಳ ಬಾಗಿಲ ಬಳಿ ನಾನು ಹೊಂಚುಹಾಕಿದ್ದರೆ,</verse>
				<verse number="10">ನನ್ನ ಸತಿ ಮತ್ತೊಬ್ಬನಿಗೆ ಧಾನ್ಯಬೀಸುವ ದಾಸಿಯಾಗಲಿ ಅಂಥ ನನ್ನ ಸತಿಯೊಡನೆ ಇತರರು ಸಂಗಮಿಸಲಿ.</verse>
				<verse number="11">ಏಕೆಂದರೆ ಅಂಥ ನಡತೆ ಕಾಮುಕತನವಾಗುತ್ತಿತ್ತು ನ್ಯಾಯಾಧಿಪತಿಗಳ ದಂಡನೆಗೆ ತಕ್ಕ ಅಪರಾಧವಾಗುತ್ತಿತ್ತು.</verse>
				<verse number="12">ನರಕ ಕೂಪದವರೆಗೆ ಬೆಂಕಿಯಾಗುತ್ತಿತ್ತು ನನ್ನ ಆದಾಯವನ್ನೆಲ್ಲ ನಿರ್ಮೂಲಮಾಡುತ್ತಿತ್ತು.</verse>
				<verse number="13">ನನ್ನ ದಾಸದಾಸಿಯರು ನನ್ನ ಮೇಲೆ ತಪ್ಪುಹೊರಿಸಿದ್ದರೆ ನಾನು ಆ ತಪ್ಪನು ಅಸಡ್ಡೆ ಮಾಡಿದವನಾಗಿದ್ದರೆ,</verse>
				<verse number="14">ದೇವರು ನ್ಯಾಯಸ್ಥಾಪನೆಗೆ ನಿಂತಾಗ ನಾನೇನು ಮಾಡುತ್ತಿದ್ದೆ? ಆತ ವಿಚಾರಣೆಗೆ ಬಂದಾಗ ನಾನೇನು ಉತ್ತರಕೊಡುತ್ತಿದ್ದೆ?</verse>
				<verse number="15">ತಾಯಗರ್ಭದಲ್ಲಿ ನನ್ನ ನಿರ್ಮಿಸಿದಾತನೆ ಅವರನೂ ನಿರ್ಮಿಸಲಿಲ್ಲವೆ? ತಾಯಗರ್ಭದಲ್ಲಿ ನಮ್ಮನು ರೂಪಿಸಿದಾತ ಅದೇ ದೇವರಲ್ಲವೆ?</verse>
				<verse number="16">ಬಡವರ ಬಯಕೆಗಳನು ನಾನು ಭಂಗಪಡಿಸಿದೆನೋ? ವಿಧವೆಯ ಕಣ್ಣುಗಳನು ನಾನು ಮಂಕಾಗಿಸಿದೆನೋ?</verse>
				<verse number="17">ಅನಾಥರೊಂದಿಗೆ ಅನ್ನವನು ಹಂಚಿಕೊಳ್ಳದೆ ತುತ್ತನ್ನೆಲ್ಲಾ ನಾನೇ ಒಂಟಿಯಾಗಿ ಉಂಡೆನೆ?</verse>
				<verse number="18">ಇಲ್ಲ, ಬಾಲ್ಯದಲ್ಲಿ ಅನಾಥನನು ತಂದೆಯೋಪಾದಿಯಲಿ ಸಾಕಿದೆ ಹುಟ್ಟಿದಂದಿನಿಂದ ಅನಾಥನಿಗೆ ದಾರಿತೋರಿಸಿದೆ.</verse>
				<verse number="19">ಬಟ್ಟೆಯಿಲ್ಲದ ಬಡವನನು ನೋಡಿದಾಗಲೆಲ್ಲಾ ಹೊದಿಕೆಯಿಲ್ಲದೆ ನಡುಗುವುದನು ಕಂಡಾಗಲೆಲ್ಲಾ,</verse>
				<verse number="20">	ಅವರನು ನಾನು ಬೆಚ್ಚಗಾಗಿಸದೆ ಹೋಗಿದ್ದರೆ ನನ್ನ ಕುರಿಉಣ್ಣೆಯಿಂದ, ಅವರು ನನ್ನನು ಹರಸದೇಹೋಗಿದ್ದರೆ ತಮ್ಮ ಅಂತರಾಳದಿಂದ,</verse>
				<verse number="21">‘ನ್ಯಾಯಸ್ಥಾನದಲ್ಲಿ ನನಗೆ ಬೆಂಬಲವಿದೆ’ ಎಂದು ತಬ್ಬಲಿಯರ ಮೇಲೆ ನಾನು ಕೈಮಾಡಿದ್ದರೆ.</verse>
				<verse number="22">ನನ್ನ ಹೆಗಲಿನ ಕೀಲು ತಪ್ಪಿಹೋಗಲಿ ನನ್ನ ತೋಳು ಅದರ ಸಂದಿನಿಂದ ಕಳಚಿಬೀಳಲಿ.</verse>
				<verse number="23">ದೇವರಿಂದ ಬರುವ ವಿಪತ್ತಿನ ಬಗ್ಗೆ ನನಗಿದೆ ಭಯ ಆತನ ಪ್ರಭಾವದ ನಿಮಿತ್ತ ಇಂಥ ಕೃತ್ಯ ನನಗೆ ದುಸ್ಸಾಧ್ಯ.</verse>
				<verse number="24">ಬಂಗಾರದಲಿ ನಾನು ಭರವಸೆಯಿಟ್ಟಿದ್ದರೆ ಅಪರಂಜಿಯನೇ ನಾನು ನೆಚ್ಚಿಕೊಂಡಿದ್ದರೆ,</verse>
				<verse number="25">ನನ್ನ ಆಸ್ತಿ ಅಪಾರವೆಂದು ಕೊಚ್ಚಿಕೊಂಡಿದ್ದರೆ ನಾನೇ ಸಂಪಾದಿಸಿದ ಸಂಪತ್ತೆಂದು ಹೆಚ್ಚಳಪಟ್ಟಿದ್ದರೆ,</verse>
				<verse number="26">ಪ್ರಕಾಶಮಯ ಸೂರ್ಯನನು ನೋಡಿ ಕಾಂತಿಯುತ ಚಂದ್ರನ ಚಲನೆಯನು ದಿಟ್ಟಿಸಿ,</verse>
				<verse number="27">ನನ್ನ ಹೃದಯ ಅವಕ್ಕೆ ಮಾರುಹೋಗಿದ್ದರೆ ಬಾಯ್ಮೇಲೆ ಕೈಯಿಟ್ಟು ಅವನ್ನು ಆರಾಧಿಸಿದ್ದರೆ,</verse>
				<verse number="28">ಇದು ಕೂಡ ನ್ಯಾಯಾಧಿಪತಿಗಳ ದಂಡನೆಗೆ ಯೋಗ್ಯವಾಗುತ್ತಿತ್ತು ಮೇಲಣ ಲೋಕದ ದೇವರಿಗೆ ದ್ರೋಹವೆಸಗಿದಂತಾಗುತ್ತಿತ್ತು.</verse>
				<verse number="29">ನನ್ನ ವೈರಿಗೆ ಕೇಡುಬಂದಾಗ ನಾನು ಹಿಗ್ಗಿದೆನೋ? ಅವನ ವಿನಾಶಕ್ಕಾಗಿ ನಾನು ಸಂತೋಷಪಟ್ಟೆನೋ?</verse>
				<verse number="30">ಇಲ್ಲ, ಅವನು ಸಾಯಲಿ ಎಂದು ನನ್ನ ಬಾಯಿ ಶಪಿಸಿಲ್ಲ ಅಂಥ ಪಾಪಕಟ್ಟಿಕೊಳ್ಳಲು ನನ್ನ ಮನ ಒಪ್ಪಲಿಲ್ಲ.</verse>
				<verse number="31">‘ಆತ ಬಡಿಸಿದ ಭೋಜನದಿಂದ ತೃಪ್ತರಾಗದವರು ಎಲ್ಲಾದರೂ ಉಂಟೆ?’ ಎಂದು ನನ್ನ ಗುಡಾರದ ಆಳುಗಳೇ ಹೇಳಿಕೊಳ್ಳುತ್ತಿದ್ದರಲ್ಲವೆ?</verse>
				<verse number="32">ಪರದೇಶೀಯರು ಹೊರಬೀದಿಯಲ್ಲಿ ತಂಗಬೇಕಾಗಿರಲಿಲ್ಲ ಪ್ರಯಾಣಿಕರಿಗೆ ನನ್ನ ಬಾಗಿಲು ಸದಾ ತೆರೆದಿತ್ತಲ್ಲಾ.</verse>
				<verse number="33">ಜನಸಮುದಾಯಕ್ಕೆ ನಾನು ಹೆದರಿದ್ದರೆ ಕುಲೀನರ ತಿರಸ್ಕಾರಕ್ಕೆ ನಾನು ಬೆದರಿದ್ದರೆ,</verse>
				<verse number="34">ಬಾಗಿಲನ್ನೂ ದಾಟದೆ ಒಳಗೇ ನಾನು ಮೌನವಿದ್ದಿದ್ದರೆ ಜನಸಾಮಾನ್ಯರಂತೆ ಪಾಪವನು ಮನದಲೆ ಬಚ್ಚಿಟ್ಟಿದ್ದರೆ,</verse>
				<verse number="35">ನನ್ನ ಕರೆಗೆ ಕಿವಿಗೊಡುವನೊಬ್ಬನು ಈಗಿದ್ದರೆ ಲೇಸಾಗಿರುತ್ತಿತ್ತು (ಇಗೋ ನೋಡಿ, ನನ್ನ ಕೈರುಜು; ನನಗುತ್ತರಕೊಡಲಿ ಸರ್ವಶಕ್ತನು;) ಬರೆದುಕೊಡಲಿ ವಿರೋಧಿ ನನ್ನ ಆಪಾದನಾ ಪತ್ರವನು.</verse>
				<verse number="36">ಆ ಲಿಖಿತವನ್ನು ಹೆಗಲ ಮೇಲೆ ಹೊತ್ತು ನಡೆಯುತ್ತಿದ್ದೆ ಅದನ್ನು ಪೇಟವಾಗಿ ತಲೆಗೆ ಸುತ್ತಿಕೊಳ್ಳುತ್ತಿದ್ದೆ.</verse>
				<verse number="37">ಅಧಿಪತಿಯಂತೆ ಆತನ ಸಾನಿಧ್ಯವನು ಸೇರುತ್ತಿದ್ದೆ ಒಂದೊಂದು ಹೆಜ್ಜೆಯ ಲೆಕ್ಕವನು ಒಪ್ಪಿಸುತ್ತಿದ್ದೆ.</verse>
				<verse number="38">ನನ್ನ ಭೂಮಿ ನನಗೆ ವಿರುದ್ಧ ಪ್ರತಿಭಟಿಸಿದ್ದರೆ ನೇಗಿಲ ಗೆರೆಗಳೆಲ್ಲ ನನ್ನನು ದೂರಿ ರೋದಿಸಿದ್ದರೆ,</verse>
				<verse number="39">ಕೂಲಿಕೊಡದೆ ಆ ಭೂಮಿಯ ಫಲವನು ನಾನು ಸವಿದಿದ್ದರೆ ಅದರ ದಣಿಗಳ ಪ್ರಾಣಹಾನಿಗೆ ನಾನು ಕಾರಣನಾಗಿದ್ದರೆ,</verse>
				<verse number="40">ಅದು ಬೆಳೆಯಲಿ ಮುಳ್ಳುಗಳನ್ನು ಗೋದಿಗೆ ಬದಲಾಗಿ ಹಣಜಿಹುಲ್ಲನು ಜವೆಗೋದಿಗೆ ಪ್ರತಿಯಾಗಿ.” ಇತಿ, ಯೋಬನ ಮಾತುಗಳು ಮುಗಿದವು.</verse>
			</chapter>
			<chapter number="32">
				<verse number="1">ಯೋಬನು ತಾನು ಸತ್ಯವಂತನೆಂದು ಸಾಧಿಸಿದ್ದನು. ಇದನ್ನು ಕೇಳಿದ ಅವನ ಮೂವರು ಮಿತ್ರರು ವಾದಿಸುವುದನ್ನು ನಿಲ್ಲಿಸಿಬಿಟ್ಟರು.</verse>
				<verse number="2">ಆಗ ಬೂಜ್‍ನವನಾದ ಬರಕೇಲನ ಮಗ ಎಲೀಹುವನಿಗೆ ಸಿಟ್ಟೇರಿತು. ಇವನು ರಾಮ್‍ಗೋತ್ರಕ್ಕೆ ಸೇರಿದವನು. ಯೋಬನು ತಾನು ದೇವರಿಗಿಂತ ನ್ಯಾಯವಂತನೆಂದು ಎಣಿಸಿಕೊಂಡ ಕಾರಣ ಎಲೀಹುವನಿಗೆ ಸಿಟ್ಟುಹತ್ತಿತ್ತು.</verse>
				<verse number="3">ಯೋಬನ ಆ ಮೂವರು ಮಿತ್ರರ ಮೇಲೂ ಅವನು ಕೋಪಗೊಂಡನು. ಏಕೆಂದರೆ ಯೋಬನಿಗೆ ತಕ್ಕ ಉತ್ತರ ಕೊಡಲಾಗದೆ ದೇವರನ್ನೇ ತಪ್ಪಿತಸ್ಥರನ್ನಾಗಿಸಿದ್ದರು.</verse>
				<verse number="4">ಆ ಮಿತ್ರರು ತನಗಿಂತ ಹಿರಿಯವರಾಗಿದ್ದುದರಿಂದ ಎಲೀಹುವನು ಮೊದಲೇ ಮಾತನಾಡದೆ ಈವರೆಗೂ ಕಾದುಕೊಂಡಿದ್ದನು.</verse>
				<verse number="5">ಆ ಮೂವರ ಬಾಯಿಯಲ್ಲಿ ಉತ್ತರವೇ ಇಲ್ಲದುದನ್ನು ಕಂಡು ಕಿಡಿಕಿಡಿಯಾದನು.</verse>
				<verse number="6">	ಆಗ ಬೂಜಿನವನಾದ ಬರಕೇಲನ ಮಗ ಎಲೀಹುವನು ಕೊಟ್ಟ ಉತ್ತರ: “ನಾನು ಕಿರಿಯವನು, ನೀವು ಎಷ್ಟೋ ಹಿರಿಯವರು ಎಂದೇ ಸಂಕೋಚಪಟ್ಟೆನು ನನ್ನ ಅಭಿಪ್ರಾಯ ತಿಳಿಸಲು ಅಂಜಿದೆನು.</verse>
				<verse number="7">ದೊಡ್ಡವರು ಮಾತಾಡಲಿ ಎಂದುಕೊಂಡೆನು ವಯೋವೃದ್ಧರು ಸುಜ್ಞಾನವನು ಬೋಧಿಸಲಿ ಎಂದೆನು.</verse>
				<verse number="8">ಆದರೆ ಮಾನವರಿಗುಂಟು ಒಂದು ಆತ್ಮ ಸರ್ವಶಕ್ತಸ್ವಾಮಿಯ ಉಸಿರಿನ ಮೂಲಕ ಅವರಿಗೆ ದೊರಕುತ್ತದೆ ವಿವೇಕ.</verse>
				<verse number="9">ವಯೋವೃದ್ಧರು ಮಾತ್ರ ಜ್ಞಾನಿಗಳಲ್ಲ ಮುದುಕರು ಮಾತ್ರ ನ್ಯಾಯಬಲ್ಲವರಲ್ಲ.</verse>
				<verse number="10">ಆದಕಾರಣ ನನ್ನ ಕಡೆಗೂ ಕಿವಿಗೊಡಿ ನನ್ನ ಅಭಿಪ್ರಾಯ ತಿಳಿಸುತ್ತೇನೆ, ಕೇಳಿ:</verse>
				<verse number="11">ನೀವು ಆಡುತ್ತಿದ್ದ ಮಾತುಗಳನು, ಮಾಡುತ್ತಿದ್ದ ಆಲೋಚನೆಗಳನು ಮುಂದಿಡುತ್ತಿದ್ದ ವಾದಗಳನು ನಾನು ಕಾದು ಕೇಳುತ್ತಿದ್ದೆನು.</verse>
				<verse number="12">ಯೋಬನನು ಖಂಡಿಸಬಲ್ಲವನು, ಅವನಿಗೆ ತಕ್ಕ ಉತ್ತರಕೊಡಬಲ್ಲವನು ನಿಮ್ಮಲ್ಲಿ ಯಾರೂ ಇಲ್ಲದಿರುವುದನು ನಾನು ಗಮನಿಸಿದೆನು.</verse>
				<verse number="13">‘ನಿಮಗೆ ಬುದ್ಧಿ ಬಂದಿದೆ’ ಎಂದುಕೊಳ್ಳಬೇಡಿ ‘ದೇವರೇ ಅವನನು ಖಂಡಿಸಲಿ, ನರನಿಂದಾಗದು,’ ಎನ್ನದಿರಿ.</verse>
				<verse number="14">ಯೋಬನು ನನ್ನೊಡನೆ ವಾದಮಾಡಲಿಲ್ಲ ನಿಮ್ಮ ಹಾಗೆ ಅವನಿಗೆ ನಾನು ಉತ್ತರಿಸುವುದಿಲ್ಲ.</verse>
				<verse number="15">“ಯೋಬನೇ, ಇವರು ಉತ್ತರಿಸದೆ ನಿಬ್ಬೆರಗಾಗಿರುವರು ಇವರ ಸೊಲ್ಲೇ ಅಡಗಿಹೋಗಿರುವುದು.</verse>
				<verse number="16">ಉತ್ತರ ಕೊಡಲಾಗದೆ ಇವರು ಮೌನದಿಂದಿರಲು ನಾನಿನ್ನೂ ಸುಮ್ಮನೆ ಕಾದುಕೊಂಡಿರಲಾಗದು.</verse>
				<verse number="17">ನಾನು ನನ್ನ ಪಾಲಿನ ಉತ್ತರವನು ಹೇಳುವೆನು ನಿನಗೆ ನನ್ನ ಅಭಿಪ್ರಾಯವನು ತಿಳಿಸುವೆನು.</verse>
				<verse number="18">ಹೇಳಬೇಕಾದವು ನನ್ನಲ್ಲಿ ತುಂಬಿವೆ ಹೇಳಲು ನನ್ನ ಅಂತರಾತ್ಮ ಒತ್ತಾಯಪಡಿಸುತ್ತಿದೆ.</verse>
				<verse number="19">ದ್ರಾಕ್ಷಾರಸ ತುಂಬಿ ಬಾಯಿಕಟ್ಟಿದ ಹೊಸಬುದ್ದಲಿಯಂತೆ ನನ್ನ ಅಂತರಂಗವು ಬಿರಿದು ಒಡೆದುಹೋಗುವ ಹಾಗಿದೆ.</verse>
				<verse number="20">ತುಟಿ ತೆರೆದು ನಾನು ಉತ್ತರಿಸಲೇಬೇಕು ನೆಮ್ಮದಿಯಿಂದಿರಲು ನಾನು ಮಾತಾಡಲೇಬೇಕು.</verse>
				<verse number="21">ನಾನಾರಿಗೂ ಮುಖದಾಕ್ಷಿಣ್ಯ ತೋರುವುದಿಲ್ಲ ಯಾವ ಮಾನವನಿಗೂ ಮುಖಸ್ತುತಿ ಸಲ್ಲಿಸುವುದಿಲ್ಲ.</verse>
				<verse number="22">ಮುಖಸ್ತುತಿ ಮಾಡಲು ನನ್ನಿಂದಾಗುವುದಿಲ್ಲ. ಮಾಡಿದರೆ ಸೃಷ್ಟಿಕರ್ತ ನನ್ನನು ಬೇಗ ನಿರ್ಮೂಲಮಾಡಬಲ್ಲ.”</verse>
			</chapter>
			<chapter number="33">
				<verse number="1">“ಇಂತಿರಲು, ಯೋಬನೇ, ನನ್ನ ಮಾತುಗಳಿಗೆ ಕಿವಿಗೊಡು: ನಾನು ಹೇಳುವುದನ್ನೆಲ್ಲಾ ಗಮನವಿಟ್ಟು ಕೇಳು.</verse>
				<verse number="2">ಇಗೋ, ಮಾತಾಡಲು ತೊಡಗಿದ್ದೇನೆ ನನ್ನ ನಾಲಿಗೆ ಬಾಯಲ್ಲಿ ತುಡುಕುತ್ತಿದೆ.</verse>
				<verse number="3">ನನ್ನ ನುಡಿ ವ್ಯಕ್ತಪಡಿಸುತ್ತದೆ ಹೃದಯದ ಯಥಾರ್ಥತೆಯನು ನನ್ನ ತುಟಿ ನುಡಿಯುತ್ತದೆ ಸತ್ಯವೆಂದು ಅರಿತವುಗಳನು.</verse>
				<verse number="4">ನಾನು ನಿರ್ಮಿತನಾಗಿದ್ದೇನೆ ದೇವರಾತ್ಮನಿಂದ ನನಗೆ ಜೀವ ಉಂಟಾಗಿದೆ ಸರ್ವಶಕ್ತನ ಶ್ವಾಸದಿಂದ.</verse>
				<verse number="5">ನಿನಗೆ ಸಾಮರ್ಥ್ಯವಿದ್ದರೆ ನನಗೆ ಉತ್ತರಕೊಡು ನನ್ನ ಎದುರಿನಲ್ಲೇ ನಿಂತು ವಾದಮಾಡು.</verse>
				<verse number="6">ನೋಡು, ನಾನು ಕೂಡ ಜೇಡಿಮಣ್ಣಿನಿಂದ ರೂಪಿತನು ದೇವರ ದೃಷ್ಟಿಯಲ್ಲಿ ನಿನ್ನ ಹಾಗೆಯೇ ಇರುವವನು.</verse>
				<verse number="7">ಆದ್ದರಿಂದ ನೀನು ನನಗೆ ಅಂಜಬೇಕಾಗಿಲ್ಲ ನನ್ನ ಕೈ ಬಲ ನಿನಗೆ ಹೊರೆಯಾಗಿರುವುದಿಲ್ಲ.</verse>
				<verse number="8">ನನಗೆ ಸ್ಪಷ್ಟವಾಗಿ ಕೇಳಿಸುವಂತೆ ನೀನು ಮಾತಾಡಿರುವೆ ನನ್ನ ಕಿವಿಗೆ ಬಿದ್ದ ಈ ಮಾತುಗಳು ನಿನ್ನವೇ ಆಗಿವೆ.</verse>
				<verse number="9">‘ನಾನು ಪರಿಶುದ್ಧನು, ನಿರ್ದೋಷಿ ನಾನು ನಿರ್ಮಲನು, ನಿರಪರಾಧಿ.</verse>
				<verse number="10">‘ಆದರೂ ನನ್ನಲ್ಲಿ ದೇವರು ತಪ್ಪುಕಂಡುಹಿಡಿಯಬೇಕೆಂದಿದ್ದಾನೆ ನನ್ನನ್ನು ತನ್ನ ಶತ್ರುವೆಂದೇ ಭಾವಿಸಿದ್ದಾನೆ.</verse>
				<verse number="11">‘ನನ್ನ ಕಾಲುಗಳಿಗೆ ಕೋಳ ತೊಡಿಸಿದ್ದಾನೆ ನನ್ನ ಎಲ್ಲ ಹಾದಿಗಳನ್ನು ಕಂಡುಕೊಂಡಿದ್ದಾನೆ.’</verse>
				<verse number="12">ಹೀಗೆ ನೀನು ನುಡಿದದ್ದು ಸರಿಯಲ್ಲವೆಂಬುದೇ ನನ್ನ ಉತ್ತರ; ದೇವರು ಮನುಷ್ಯರಿಗಿಂತ ದೊಡ್ಡವನು ಎಂಬುದೇ ಇದಕ್ಕೆ ಆಧಾರ.</verse>
				<verse number="13">ಆತ ನಿನ್ನ ಯಾವ ಮಾತಿಗೂ ಉತ್ತರ ಕೊಡಲಿಲ್ಲ ಎಂದ ಮಾತ್ರಕ್ಕೆ ನೀನು ಆತನೊಡನೆ ವ್ಯಾಜ್ಯವಾಡುವುದು ಸರಿಯಲ್ಲ.</verse>
				<verse number="14">ದೇವರು ಪದೇ ಪದೇ ಮಾತನಾಡಿದರೂ ನರಮಾನವನು ಗ್ರಹಿಸಿಕೊಳ್ಳುವುದಿಲ್ಲ.</verse>
				<verse number="15">ಮಾನವನಿಗೆ ಗಾಢನಿದ್ರೆ ಬಂದಾಗ ಹಾಸಿಗೆ ಮೇಲೆ ಮಲಗಿರುವಾಗ ಸ್ವಪ್ನ ಬಿದ್ದಾಗ, ಕನಸು ಕಾಣುವಾಗ.</verse>
				<verse number="16">ದೇವರು ಅವನ ಕಿವಿಗಳನ್ನು ತೆರೆಯುತ್ತಾನೆ ಉಪದೇಶಮಾಡಿ ಎಚ್ಚರಿಕೆ ನೀಡುತ್ತಾನೆ.</verse>
				<verse number="17">ಹೀಗೆ ದುಷ್ಕಾರ್ಯದಿಂದ ಮನುಷ್ಯನನ್ನು ತಪ್ಪಿಸುತ್ತಾನೆ ಅವನ ಅಹಂಕಾರ ಗರ್ವವನು ಅಡಗಿಸುತ್ತಾನೆ.</verse>
				<verse number="18">ಅವನ ಆತ್ಮ ಅಧೋಲೋಕಕ್ಕಿಳಿಯದಂತೆ ತಡೆಯುತ್ತಾನೆ ಅವನ ಪ್ರಾಣ ಕತ್ತಿಗೆ ತುತ್ತಾಗದಂತೆ ಕಾಪಾಡುತ್ತಾನೆ.</verse>
				<verse number="19">ಇದಲ್ಲದೆ, ಮಾನವ ವ್ಯಾಧಿಯಿಂದ ಹಾಸಿಗೆ ಹಿಡಿದಿರುವಾಗ ಅವನನ್ನು ತಿದ್ದುತ್ತಾನೆ ಅವನ ದೇಹ ನರಳುತ್ತಿರುವಾಗ.</verse>
				<verse number="20">ಅವನಿಗೆ ಆಹಾರವೂ ಬೇಸರವಾಗುವುದು ಮೃಷ್ಟಾನ್ನವೂ ಅಸಹ್ಯವಾಗುವುದು.</verse>
				<verse number="21">ಅವನ ಮಾಂಸಖಂಡ ಕರಗಿಹೋಗುವುದು ಅವನ ಅಸ್ಥಿಪಂಜರ ಎದ್ದು ಕಾಣುವುದು.</verse>
				<verse number="22">ಅವನ ಆತ್ಮ ಅಧೋಲೋಕವನ್ನು ಸಮೀಪಿಸುವುದು ಅವನ ಪ್ರಾಣ ಮೃತ್ಯುದೂತರಿಗೆ ಹತ್ತಿರವಾಗುವುದು.</verse>
				<verse number="23">ಆದರೆ ಸಹಸ್ರ ದೂತರಲ್ಲೊಬ್ಬ ಮಧ್ಯಸ್ಥನಾಗಿ ಅವನ ಪಕ್ಕದಲ್ಲಿ ನಿಂತು ಅವನ ಕರ್ತವ್ಯವೇನೆಂದು ತಿಳಿಸಿ,</verse>
				<verse number="24">‘ಇವನನ್ನು ಕಾಪಾಡಿ; ಅಧೋಲೋಕಕ್ಕೆ ತಳ್ಳಬೇಡಿ, ಬಿಡುಗಡೆ ಬೇಕಾದ ಈಡು ಇದೋ ಇಲ್ಲಿ!’ ಎಂದು ಹೇಳಿದರೆ,</verse>
				<verse number="25">ಅವನ ದೇಹ ಬಾಲ್ಯಕ್ಕಿಂತಲೂ ಕೋಮಲವಾಗುವುದು ಎಳೆತನದ ಚೈತನ್ಯವನ್ನು ಮತ್ತೆ ಅನುಭವಿಸುವನು.</verse>
				<verse number="26">ಆಗ ಅವನು ದೇವರಿಗೆ ಪ್ರಾರ್ಥನೆ ಮಾಡುವನು ಆತನ ಒಲುಮೆಗೆ ಪಾತ್ರನಾಗುವನು. ಹರ್ಷೋದ್ಗಾರದಿಂದ ಆತನ ಸನ್ನಿಧಿಗೆ ಬರುವನು ಮತ್ತೆ ಆತನಿಂದ ಸತ್ಯವಂತ ಎನಿಸಿಕೊಳ್ಳುವನು.</verse>
				<verse number="27">ಆಗ ಅವನು ಜನರ ಮುಂದೆ ಈ ಪರಿ ಹಾಡುವನು: ‘ಪಾಪ ಮಾಡಿದೆ; ಸನ್ಮಾರ್ಗ ಬಿಟ್ಟು ನಡೆದೆ ಆದರೂ ದಂಡಿಸಲಿಲ್ಲ ದೇವರು ನನ್ನ ಪಾಪಕ್ಕೆ ತಕ್ಕಂತೆ.</verse>
				<verse number="28">ವಿಮೋಚಿಸಿದ್ದಾನೆ ನನ್ನ ಆತ್ಮ ಅಧೋಲೋಕ ಸೇರದಂತೆ ನನ್ನ ಜೀವವು ಜ್ಯೋತಿಯನು ಕಾಣುವಂತೆ.’</verse>
				<verse number="29">ಇದನ್ನೆಲ್ಲ ನೀಡುವನು ಆ ದೇವರೇ ಇಮ್ಮಡಿ ಮುಮ್ಮಡಿಯಾಗಿ ನೀಡುವನು ಮನುಜನಿಗೆ.</verse>
				<verse number="30">ಅವನ ಆತ್ಮವನು ಅಧೋಲೋಕದಿಂದ ಹಿಂದಿರುಗಿಸುವನು ಜೀವಲೋಕದ ಬೆಳಕನು ಅನುಭವಿಸುವಂತೆ ಮಾಡುವನು.</verse>
				<verse number="31">ಯೋಬನೇ, ನನ್ನ ಮಾತಿಗೆ ಕಿವಿಗೊಡು, ಮೌನದಿಂದ ಕೇಳು, ನಾನೇ ಮಾತಾಡಲಿರುವೆ:</verse>
				<verse number="32">ಏನಾದರೂ ಹೇಳಬೇಕೆಂದಿದ್ದರೆ ಹೇಳು, ಉತ್ತರಕೊಡು ನನಗೆ, ನೀನು ಸತ್ಯವಂತನೆಂದು ಸ್ಥಾಪಿಸಬೇಕೆಂಬುದೇ ನನ್ನ ಬಯಕೆ.</verse>
				<verse number="33">ಇಲ್ಲವಾದರೆ ಸುಮ್ಮನಿದ್ದು ಕಿವಿಗೊಡು ನಿನಗೆ ಬೋಧಿಸುವೆನು ಸುಜ್ಞಾನವನು.”</verse>
			</chapter>
			<chapter number="34">
				<verse number="1">	 ಎಲೀಹುವನು ಮತ್ತೆ ಹೀಗೆಂದನು:</verse>
				<verse number="2">“ಜ್ಞಾನಿಗಳೇ, ನನ್ನ ಮಾತನ್ನು ಗಮನಿಸಿ: ಮೇಧಾವಿಗಳೇ, ನನಗೆ ಕಿವಿಗೊಡಿ:</verse>
				<verse number="3">ನಾಲಿಗೆ ಆಹಾರವನು ರುಚಿನೋಡುವಂತೆ ಕಿವಿ ನುಡಿಮಾತುಗಳನು ವಿವೇಚಿಸುತ್ತದೆ.</verse>
				<verse number="4">ಸರಿಯಾದುದನ್ನೇ ಆಯ್ದುಕೊಳ್ಳೋಣ ಒಳಿತಾದುದನ್ನು ನಮ್ಮ ನಮ್ಮಲ್ಲೇ ನಿಶ್ಚಯಿಸಿಕೊಳ್ಳೋಣ.</verse>
				<verse number="5">ಇಂತಿದೆ ಯೋಬನ ವಾದ - ‘ನಾನು ಸತ್ಯವಂತ ನನಗೆ ದೇವರಿಂದ ನ್ಯಾಯ ದೊರೆತಿಲ್ಲ.</verse>
				<verse number="6">ನನ್ನಲ್ಲಿ ನ್ಯಾಯವಿದ್ದರೂ ಸುಳ್ಳುಗಾರನೆನಿಸಿಕೊಂಡಿದ್ದೇನೆ ನಿರ್ದೋಷಿಯಾಗಿದ್ದರೂ ನನಗೆ ದೇವರ ಪೆಟ್ಟು ಬಾಣಬಿಟ್ಟಂತಿದೆ.’</verse>
				<verse number="7">ಈ ಯೋಬನಂಥ ಮನುಜನು ಯಾರಿದ್ದಾನೆ? ಇಗೋ, ದೇವದೂಷಣೆಯನು ನೀರಿನಂತೆ ಕುಡಿಯುತ್ತಾನೆ!</verse>
				<verse number="8">ಇವನು ದುರ್ಜನರ ಸಂಗಡ ಸಂಚರಿಸುವವನು ಕೆಡುಕರ ಸಂಗಡ ನಡೆದಾಡುವವನು.</verse>
				<verse number="9">ದೇವರನು ಪ್ರೀತಿಸಿ ಬಾಳುವುದರಿಂದ ಪ್ರಯೋಜನವಿಲ್ಲವೆಂಬುದು ಇವನ ವಾದ.</verse>
				<verse number="10">ಹೀಗಿರಲು ಬುದ್ದಿವಂತರೇ, ನನ್ನ ಮಾತುಗಳಿಗೆ ಕಿವಿಗೊಡಿ ದೇವರು ಕೆಟ್ಟದ್ದನ್ನು ಮಾಡಿಯಾನೆಂಬ ಯೋಚನೆ ದೂರವಿರಲಿ ಸರ್ವಶಕ್ತನು ಅನ್ಯಾಯವನು ಎಸಗಿಯಾನೆಂಬ ಭಾವನೆ ಬಾರದಿರಲಿ.</verse>
				<verse number="11">ದೇವರು ನರನಿಗೆ ಅವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನೀಯುತ್ತಾನೆ ಪ್ರತಿಯೊಬ್ಬನು ಅವನವನ ಕರ್ಮಕ್ಕೆ ತಕ್ಕಂತೆ ಅನುಭವಿಸಮಾಡುತ್ತಾನೆ.</verse>
				<verse number="12">ಹೌದು, ದೇವರು ಎಂದಿಗೂ ಕೆಡುಕನು ಮಾಡನು ಸರ್ವಶಕ್ತನು ಎಂದಿಗೂ ನೇರವಾದುದನು ಡೊಂಕುಮಾಡನು.</verse>
				<verse number="13">ಭೂಲೋಕವನು ಆತನ ವಶಕ್ಕೆ ಕೊಟ್ಟವನುಂಟೆ? ಆತನಲ್ಲದೆ ಭೂಮಂಡಲವನು ಕ್ರಮಪಡಿಸಿದವನುಂಟೆ?</verse>
				<verse number="14">ದೇವರು ಮನಸ್ಸುಮಾಡಿ ತನ್ನ ಆತ್ಮವನ್ನು ಹಿಂದಕ್ಕೆ ತೆಗೆದುಕೊಂಡನಾದರೆ ತನ್ನ ಶ್ವಾಸವನ್ನು ಹಿಂದಕೆ ಎಳೆದುಕೊಂಡನಾದರೆ,</verse>
				<verse number="15">ಸಮಸ್ತಜನರು ಒಟ್ಟಾಗಿ ಅಳಿದುಹೋಗುವರು ಮರಳಿ ಮನುಷ್ಯರೆಲ್ಲರೂ ಮಣ್ಣಾಗಿ ಮಾರ್ಪಡುವರು.</verse>
				<verse number="16">ಬುದ್ದಿಯಿದ್ದರೆ ಇದನು ಕೇಳಿ ನನ್ನ ಮಾತಿನ ದನಿಗೆ ಕಿವಿಗೊಡಿ.</verse>
				<verse number="17">ನ್ಯಾಯವನ್ನು ದ್ವೇಷಿಸುವವನು, ಶಿಸ್ತನು ಪಾಲಿಸುವನೋ? ಸತ್ಯಸ್ವರೂಪಿ, ಸರ್ವಶಕ್ತ ಆದ ದೇವರನು ಕೆಟ್ಟವನೆನ್ನುವಿಯೋ?</verse>
				<verse number="18">ದೇವರು ರಾಜನಿಗೆ “ಮೂರ್ಖ’ ಎಂದು ಹೇಳಬಲ್ಲನು ಪ್ರಭುಗಳನ್ನು “ದುಷ್ಟರು” ಎಂದು ಕರೆಯಬಲ್ಲನು.</verse>
				<verse number="19">ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸುವನು ಬಡವ-ಬಲ್ಲಿದನೆಂಬ ಭೇದವನ್ನು ಮಾಡನು. ಏಕೆಂದರೆ ಅವರೆಲ್ಲರು ಆ ದೇವನಿಂದಲೇ ಸೃಷ್ಟಿಯಾದವರು.</verse>
				<verse number="20">ಕ್ಷಣಮಾತ್ರದೊಳು, ನಡುರಾತ್ರಿಯೊಳು ಸತ್ತುಹೋಗುವರು ನಾಡಿನ ಪ್ರಜೆಗಳು ತಲ್ಲಣಗೊಂಡು ಇಲ್ಲದೆಹೋಗುವರು ಮನುಷ್ಯರ ಕೈಸೋಂಕದೆಯೆ ಪರಾಕ್ರಮಿಗಳು ಮಾಯವಾಗುವರು.</verse>
				<verse number="21">ದೇವರ ಕಣ್ಣು ಮನುಷ್ಯನ ಮಾರ್ಗಗಳ ಮೇಲೆ ಅವನ ಹೆಜ್ಜೆಗಳೆಲ್ಲ ಗೋಚರವಾಗಿವೆ ಆತನಿಗೆ.</verse>
				<verse number="22">ಆತನ ದೃಷ್ಟಿಯಿಂದ ದುರುಳರು ಅಡಗಿಕೊಳ್ಳುವಂತಿಲ್ಲ ಅಂಥವರನ್ನು ಅಡಗಿಸಬಲ್ಲ ಇರುಳಿಲ್ಲ ಕಾರಿರುಳೂ ಇಲ್ಲ.</verse>
				<verse number="23">ದೇವರು ಮನುಷ್ಯನ ಮೇಲೆ ಹೆಚ್ಚು ಗಮನ ಇಡಬೇಕಾಗಿಲ್ಲ ಅವನನ್ನು ನ್ಯಾಯವಿಚಾರಣೆಗೆ ಕರೆಯುವ ಅವಶ್ಯಕತೆ ಇಲ್ಲ.</verse>
				<verse number="24">ವಿಚಾರಣೆ ಇಲ್ಲದೆಯೆ ಪರಾಕ್ರಮಿಗಳನು ಸದೆಬಡಿಯುವನು ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸಬಲ್ಲನು.</verse>
				<verse number="25">ದುಷ್ಕಾರ್ಯಗಳು ಆತನಿಗೆ ತಿಳಿದಿರುವ ಕಾರಣ ಇರುಳಲ್ಲೇ ದುರುಳರನು ಕೆಡವಿ ನಾಶಕ್ಕೆ ಗುರಿಮಾಡುವನು.</verse>
				<verse number="26">ಅಪರಾಧಿಗಳಂತೆ ಅವರನು ದಂಡಿಸುವನು ಎಲ್ಲರು ನೋಡುವಂತೆ ಅವರನು ಖಂಡಿಸುವನು.</verse>
				<verse number="27">ದೇವರ ಮಾರ್ಗಗಳೆಲ್ಲವನು ಅವರು ಅಲಕ್ಷ್ಯಮಾಡಿದರು ಆತನಿಗೆ ವಿಧೇಯರಾಗದೆ ತಿರುಗಿಬಿದ್ದರು.</verse>
				<verse number="28">ಬಡವರ ಗೋಳಾಟ ದೇವರಿಗೆ ಮುಟ್ಟುವಂತೆ ಮಾಡಿದ್ದರು ದಿಕ್ಕಿಲ್ಲದವರ ಗೋಗರೆತ ಆತನ ಕಿವಿಗೆ ಬೀಳುವಂತೆ ಮಾಡಿದ್ದರು.</verse>
				<verse number="29">ವ್ಯಕ್ತಿಯಾಗಿರಲಿ, ರಾಷ್ಟ್ರವಾಗಿರಲಿ, ಯಾರಾಗಿದ್ದರೇನು? ದೇವರು ಸುಮ್ಮನಿದ್ದರೆ ತಪ್ಪುಹೊರಿಸುವವರಾರು? ವಿಮುಖನಾದರೆ ಆತನ ದರ್ಶನ ಪಡೆಯಬಲ್ಲವರಾರು?</verse>
				<verse number="30">ಭಕ್ತಿಹೀನನು ಜನರನು ಆಳಬಾರದು ಅಂಥವನು ಜನರಿಗೆ ಉರುಲಾಗಬಾರದು.</verse>
				<verse number="31">ಅಂಥ ಮನುಷ್ಯನು ದೇವರಿಗೆ: ‘ಪ್ರಾಯಶ್ಚಿತ್ತ ಮಾಡಿರುವೆ, ಇನ್ನು ಮುಂದೆ ಪಾಪಮಾಡೆ.</verse>
				<verse number="32">ಕಾಣದಿರುವ ಮಾರ್ಗವನ್ನು ತೋರೆನಗೆ ತಪ್ಪುಮಾಡಿದ್ದರೂ ಮತ್ತೆ ಮಾಡೆ’ ಎಂದು ಹೇಳಿದ್ದಾದರೆ,</verse>
				<verse number="33">ದೇವರು ಅಂಥವರನ್ನು ದಂಡಿಸಬೇಕೆನ್ನುತ್ತೀಯೋ? ಆತನ ತೀರ್ಪನ್ನು ನೀನೇ ಅಲ್ಲಗಳೆದಿರುವೆಯಲ್ಲವೆ? ಈಗ ನಾನು ಹೇಳಲಾರೆ, ನೀನೇ ಹೇಳು, ನಿನ್ನ ಅಭಿಪ್ರಾಯವನು ನಮಗೆ ತಿಳಿಸು.</verse>
				<verse number="34">ಬುದ್ದಿವಂತರು, ನನ್ನನಾಲಿಸಿದ ಜ್ಞಾನಿಗಳು ನಿನ್ನ ವಿಷಯವಾಗಿ ಹೇಳುವ ಮಾತುಗಳಿವು:</verse>
				<verse number="35">‘ಯೋಬನು ತಿಳುವಳಿಕೆಯಿಲ್ಲದೆ ನುಡಿದಿದ್ದಾನೆ ಅವನ ಮಾತುಗಳಲ್ಲಿ ಬುದ್ದಿವಂತಿಕೆ ಇಲ್ಲ.</verse>
				<verse number="36">ಅವನ ಪರಿಶೋಧನೆ ಇನ್ನೂ ಮುಂದುವರೆದರೆ ಒಳಿತು ಅವನು ಕೊಟ್ಟ ಉತ್ತರ ದುರುಳರಿಗೆ ತಕ್ಕುದಾದುದು.</verse>
				<verse number="37">ಅವನು ಅಪರಾಧಿ ಮಾತ್ರವಲ್ಲ, ದೇವದ್ರೋಹವೆಸಗಿದ್ದಾನೆ ನಮ್ಮ ಮಧ್ಯೆ ಸಂದೇಹವನು ಎಬ್ಬಿಸಿದ್ದಾನೆ ದೇವರಿಗೆ ವಿರುದ್ಧವಾಗಿ ಅಧಿಕ ಪ್ರಸಂಗಮಾಡುತ್ತಾನೆ’.”</verse>
			</chapter>
			<chapter number="35">
				<verse number="1">	 ಎಲೀಹುವನು ಮತ್ತೆ ಹೀಗೆಂದು ಹೇಳಿದನು:</verse>
				<verse number="2">“’ಸಜ್ಜನನಾಗಿ ಬಾಳಿ ನನಗಾದ ಪ್ರಯೋಜನವೇನು? ಪಾಪರಹಿತನಾಗಿ ಜೀವಿಸಿ ನನಗೆ ಬಂದ ಲಾಭವೇನು’</verse>
				<verse number="3">ಈ ರೀತಿ ನೀನು ನುಡಿಯುವುದು ನ್ಯಾಯವೆಂದು ಊಹಿಸುತ್ತೀಯೋ? ನಿನ್ನ ನೀತಿ ದೇವರ ನೀತಿಗಿಂತ ಮಿಗಿಲಾದುದೆನ್ನುತ್ತೀಯೋ?</verse>
				<verse number="4">ನಾನು ನಿನಗೆ ಉತ್ತರಕೊಡುತ್ತೇನೆ ನಿನ್ನ ಮಿತ್ರರಿಗೂ ಪ್ರತ್ಯುತ್ತರ ನೀಡುತ್ತೇನೆ.</verse>
				<verse number="5">ಗಗನ ಮಂಡಲವನು ಕಣ್ಣೆತ್ತಿ ನೋಡು ನಿನಗೂ ಎಷ್ಟೋ ಎತ್ತರವಾದ ಮೇಘ ಮಾರ್ಗವನು ದಿಟ್ಟಿಸಿ ನೋಡು.</verse>
				<verse number="6">ನೀನು ಪಾಪಮಾಡದಿದ್ದರೆ ದೇವರಿಗೇನು ಮಾಡಿದಂತಾಯಿತು? ನಿನ್ನ ದ್ರೋಹಗಳು ಹೆಚ್ಚಿದರೆ ಅವರಿಗಾದ ನಷ್ಟವೇನು?</verse>
				<verse number="7">ನೀನು ಸಜ್ಜನನಾಗಿದ್ದರೆ ಅವರಿಗೇನು ಕೊಟ್ಟಂತಾಯಿತು? ನಿನ್ನ ಕೈಯಿಂದ ಅವರಿಗೆ ದೊರಕಿದ ಲಾಭ ಯಾವುದು?</verse>
				<verse number="8">ನಿನ್ನ ನೀಚತನದಿಂದ ನಿನ್ನಂಥವನಿಗೇ ನಷ್ಟ ನಿನ್ನ ಸಜ್ಜನಿಕೆಯಿಂದ ನರಜನ್ಮದವನಿಗೇ ಲಾಭ.</verse>
				<verse number="9">ಅಪಾರ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾರೆ. ಬಲಿಷ್ಠರ ಭುಜಬಲದಿಂದ ಪೀಡಿತರು ಕಿರಿಚಿಕೊಳ್ಳುತ್ತಾರೆ.</verse>
				<verse number="10">ಆದರೆ ‘ನಮ್ಮನ್ನು ಸೃಷ್ಟಿಸಿದ ಕರ್ತನೆಲ್ಲಿ? ಕತ್ತಲಲ್ಲೂ ಕೀರ್ತನೆ ಹಾಡಬಲ್ಲವನೆಲ್ಲಿ?</verse>
				<verse number="11">ಕಾಡುಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನೀಯುವವನೆಲ್ಲಿ? ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ದಿಕಲಿಸುವನೆಲ್ಲಿ? ಎನ್ನುವುದೇ ಇಲ್ಲ.</verse>
				<verse number="12">ಎಂತಲೆ ದುರುಳರ ಸೊಕ್ಕನ್ನು ಮುಂದಿಟ್ಟು ಗೋಳಿಟ್ಟರೂ ದೇವರು ಅವರಿಗೆ ಉತ್ತರ ಕೊಡುವುದಿಲ್ಲ.</verse>
				<verse number="13">ದೇವರು ಪೊಳ್ಳುಮಾತಿಗೆ ಕಿವಿಗೊಡನು ಸರ್ವಶಕ್ತನು ಅದಕ್ಕೆ ಎಂದಿಗೂ ಲಕ್ಷ್ಯಕೊಡನು.</verse>
				<verse number="14">ಇಂತಿರಲು ನೀನು, ‘ಆತ ಕಾಣನು, ನನ್ನ ವ್ಯಾಜ್ಯ ಆತನ ಮುಂದಿದೆ ಆತನಿಗಾಗಿ ಕಾದಿರುವೆ’ ಎಂದುಕೊಂಡರೂ ಆತ ಕೇಳಿಯಾನೆ?</verse>
				<verse number="15">‘ದೇವರು ಸಿಟ್ಟುಗೊಂಡು ಶಿಕ್ಷಿಸುವುದಿಲ್ಲ ದ್ರೋಹಗಳನ್ನು ಅಷ್ಟಾಗಿ ಗಣನೆಗೆ ತಂದುಕೊಳ್ಳುವುದಿಲ್ಲ’</verse>
				<verse number="16">ಎಂದು ಹೇಳುತ್ತಾ ಯೋಬನು ಬಾಯಿತೆರೆಯುತ್ತಾನೆ ವ್ಯರ್ಥವಾಗಿ ತಿಳುವಳಿಕೆಯಿಲ್ಲದೆ ಮಾತಾಡುತ್ತಾನೆ ಬಹಳವಾಗಿ.”</verse>
			</chapter>
			<chapter number="36">
				<verse number="1">	ಬಳಿಕ ಎಲೀಹುವನು ಮುಂದುವರೆದು:</verse>
				<verse number="2">“ತಾಳು, ನಾನು ಹೇಳುವುದನು ಇನ್ನೂ ಸ್ವಲ್ಪ ಕೇಳು ದೇವರ ಪರವಾಗಿ ಹೇಳತಕ್ಕವು ಇನ್ನು ಕೆಲವುಂಟು:</verse>
				<verse number="3">ನನ್ನ ಸೃಷ್ಟಿಕರ್ತನು ಸತ್ಯಸ್ವರೂಪನೆಂದು ತೋರಲು ನನ್ನ ವಾದಗಳನ್ನು ಸವಿಸ್ತಾರಗೊಳಿಸುವೆನು:</verse>
				<verse number="4">ನನ್ನ ಮಾತು ಸುಳ್ಳಲ್ಲವೆಂಬುದು ನಿಶ್ಚಯ ನಿನ್ನ ಬಳಿಯಿರುವನು ಜ್ಞಾನಪೂರ್ಣನೋರ್ವ.</verse>
				<verse number="5">ದೇವರು ಸರ್ವಶಕ್ತನು, ಯಾರನ್ನೂ ತುಚ್ಛೀಕರಿಸನು ಆತನ ಬುದ್ಧಿಸಾಮರ್ಥ್ಯ ಅಪಾರವಾದುದು.</verse>
				<verse number="6">ದುರುಳರ ಪ್ರಾಣವನ್ನು ಆತ ಉಳಿಸನು ನಿರ್ಗತಿಕರ ನ್ಯಾಯವನು ಸ್ಥಾಪಿಸುವನು.</verse>
				<verse number="7">ತನ್ನ ಕಟಾಕ್ಷವನ್ನು ಸಜ್ಜನರ ಮೇಲೆ ಅಚಲವಾಗಿರಿಸುವನು ರಾಜರಂತೆ ಸಿಂಹಾಸನದ ಮೇಲೆ ಅವರನು ಕುಳ್ಳಿರಿಸುವನು ಅಮರವಾದ ಉನ್ನತ ಪದವಿಗೆ ಅವರನು ಏರಿಸುವನು.</verse>
				<verse number="8">ಆದರೆ ಅವರು ಬಂಧನಕ್ಕೊಳಗಾದರೆ ಸಂಕಟ ಸಂಕೋಲೆಗಳಿಗೆ ಸಿಕ್ಕಿಕೊಂಡರೆ,</verse>
				<verse number="9">ದೇವರು ಅವರ ದುಷ್ಕೃತ್ಯಗಳನು ತೋರಿಸುವನು ಸೊಕ್ಕಿನ ದ್ರೋಹಗಳನು ಸೂಚಿಸುವನು.</verse>
				<verse number="10">ಶಿಕ್ಷಣ ಕೇಳುವಂತೆ ಅವರ ಕಿವಿಯನ್ನು ತೆರೆಯುವನು ಅಧರ್ಮವನ್ನು ಬಿಟ್ಟುಬಿಡುವಂತೆ ಆಜ್ಞಾಪಿಸುವನು.</verse>
				<verse number="11">ಅದನ್ನು ಕೇಳಿ ಆತನ ಸೇವಾಸಕ್ತರಾದಲ್ಲಿ ತಮ್ಮ ದಿವಸಗಳನ್ನು ಕಳೆವರು ಸುಖದಲ್ಲಿ ತಮ್ಮ ವರುಷಗಳನು ಹರ್ಷಾನಂದದಲ್ಲಿ.</verse>
				<verse number="12">ಕೇಳಿದಿದ್ದರೆ ಸಾಗರದಲ್ಲಿ ಮುಳುಗಿಹೋಗುವರು ಜ್ಞಾನಹೀನರಾಗಿಯೇ ಪ್ರಾಣ ಕಳೆದುಕೊಳ್ಳುವರು.</verse>
				<verse number="13">ಕಪಟ ಹೃದಯಿಗಳು ಕೋಪಿಷ್ಠರಾಗುವರು ತಮ್ಮನ್ನು ಬಂಧಿಸುವಾಗಲು ಮೊರೆಯಿಡಲು.</verse>
				<verse number="14">ಯೌವನ ಪ್ರಾಯದಲ್ಲೇ ಸಾಯುವರು ಪುರುಷಗಾಮಿಗಳ ಮಧ್ಯೆಯಲ್ಲೇ ಗತಿಸಿಹೋಗುವರು.</verse>
				<verse number="15">ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು ಕಷ್ಟಾನುಭವಗಳ ಮೂಲಕವೆ ದೇವರು ಅವರ ಕಿವಿಯನ್ನು ತೆರೆಯುವನು.</verse>
				<verse number="16">ಅಂತೆಯೆ, ಕಷ್ಟದಿಂದ ನಿನ್ನನ್ನು ತಪ್ಪಿಸಬೇಕೆಂಬುದು ಇಕ್ಕಟ್ಟಿಲ್ಲದ ಬಯಲಿಗೆ ನಿನ್ನನ್ನು ತರಬೇಕೆಂಬುದು ನಿನ್ನ ಊಟದ ಮೇಜು ಸಮೃದ್ಧಿಯಾಗಿರಬೇಕೆಂಬುದು ದೇವರ ಉದ್ದೇಶವಾಗಿರುವುದು.</verse>
				<verse number="17">ನೀನೋ ದುಷ್ಟ ನಿರ್ಣಯಗಳಿಂದ ಭರಿತನಾಗಿರುವೆ ನ್ಯಾಯವಿಚಾರಣೆಗೂ ತೀರ್ಪಿಗೂ ಒಳಪಟ್ಟಿರುವೆ.</verse>
				<verse number="18">ಸಿರಿಸಂಪತ್ತು ನಿನ್ನನು ಕುಚೋದ್ಯಕ್ಕೆ ನೂಕೀತು, ಎಚ್ಚರಿಕೆ! ಹೆಚ್ಚು ಲಂಚಕೋರತನದಿಂದ ವಂಚಿತನಾಗಬೇಡ.</verse>
				<verse number="19">ಐಶ್ವರ್ಯವಾಗಲಿ, ಧನಸಾಮರ್ಥ್ಯವಾಗಲಿ ಕಷ್ಟಾನುಭವವಿಲ್ಲದೆ ನಿನಗೆ ಈಡಾಗವಿಲ್ಲಿ.</verse>
				<verse number="20">ತಟ್ಟನೆ ಜನಾಂಗಗಳು ನಿರ್ಮೂಲವಾಗುವಂಥ ರಾತ್ರಿಯನು ಬಯಸಬೇಡ.</verse>
				<verse number="21">ಅಕ್ರಮದ ಕರೆಗೆ ಕಾಲಿಡಬೇಡ, ಎಚ್ಚರಿಕೆ! ನಿನ್ನ ಕಷ್ಟಾನುಭವ ಅದನು ತಡೆಗಟ್ಟುತ್ತದೆ.</verse>
				<verse number="22">ದೇವರ ಶಕ್ತಿ ಉನ್ನತೋನ್ನತ ಯಾರಿಹನು ಅವನಂಥ ಬೋಧಕ?</verse>
				<verse number="23">ದೇವರಿಗೆ ಮಾರ್ಗತೋರಿಸಬಲ್ಲವನಾರು? ಆತನಿಗೆ ‘ನೀನು ಮಾಡಿರುವುದು ಅನ್ಯಾಯ,’ ಎನ್ನಬಲ್ಲವನಾರು?</verse>
				<verse number="24">ಮಾನವರು ಸ್ತುತಿಸಿರುವ ಆತನ ಕಾರ್ಯಗಳನ್ನ ನೀನೂ ಕೂಡ ಹೊಗಳಲು ಮರೆಯಬೆಡ.</verse>
				<verse number="25">ಮಾನವರೆಲ್ಲರು ಅದನ್ನು ಕಂಡಿರುವರು ನರರಾದ ನಾವು ದೂರದಿಂದ ನೋಡಬಹುದು.</verse>
				<verse number="26">ದೇವರೆನಿತೋ ಮಹೋನ್ನತನು ನಮ್ಮ ಅರಿವಿಗಾತನು ಎಟುಕನು ಅಸಂಖ್ಯಾತ ಆತನ ವರುಷಗಳು.</verse>
				<verse number="27">ನೀರಿನ ಹನಿಗಳನು ಹೀರಿಕೊಳ್ಳುತ್ತಾನೆ ಮಂಜಿನಿಂದ ತಿಳಿಮಳೆಯನು ಸುರಿಸುತ್ತಾನೆ.</verse>
				<verse number="28">ಮೋಡಗಳು ಮಳೆಗರೆಯುತ್ತವೆ, ಹಲವಾರು ಜನರ ಮೇಲೆ ಅದನ್ನು ಚಿಮುಕಿಸುತ್ತವೆ.</verse>
				<verse number="29">ಗ್ರಹಿಸುವವರಾರು ಮೇಘಗಳ ಹಬ್ಬುಗೆಯನು? ದೇವರ ಗುಡಾರದಲ್ಲಿನಾ ಗರ್ಜನೆಯನು?</verse>
				<verse number="30">ಇಗೋ, ಪಸರಿಸುತ್ತಾನೆ ಸುತ್ತಲು ತನ್ನ ಬೆಳಕನ್ನು ಮುಚ್ಚಿಡುತ್ತಾನೆ ಕಡಲಿನ ಅಡಿಭಾಗವನು.</verse>
				<verse number="31">ಹೀಗೆ ಜನಾಂಗಗಳನ್ನು ಪೋಷಣೆ ಮಾಡುತ್ತಾನೆ ಆಹಾರವನ್ನು ಧಾರಾಳವಾಗಿ ದಯಪಾಲಿಸುತ್ತಾನೆ.</verse>
				<verse number="32">ಸಿಡಿಲನ್ನೇ ಕೈತುಂಬ ಹಿಡಿದು ಗುರಿಮುಟ್ಟಲೆಂದು ಆಜ್ಞೆಯಿಡುತ್ತಾನೆ.</verse>
				<verse number="33">ಅದರ ಆರ್ಭಟವು ಆತನನ್ನು ಪ್ರಕಟಿಸುತ್ತದೆ ಆತನ ಆಗಮನವನು ದನಕರುಗಳಿಗೂ ತಿಳಿಸುತ್ತದೆ.”</verse>
			</chapter>
			<chapter number="37">
				<verse number="1">“ಇದನ್ನು ನೋಡಿದಾಗ ನನ್ನ ಎದೆ ತತ್ತರಗೊಳ್ಳುತ್ತದೆ. ನನ್ನ ಗುಂಡಿಗೆ ಎದೆಬಿಟ್ಟು ಮಿಡಿಯುತ್ತದೆ.</verse>
				<verse number="2">ದೇವರ ಧ್ವನಿಯ ಗರ್ಜನೆಯನು ಕಿವಿಗೊಟ್ಟು ಕೇಳು ಆತನ ಬಾಯಿಂದ ಹೊರಡುವ ಮಾತನು ಆಲಿಸು.</verse>
				<verse number="3">ಅದನ್ನು ಗಗನಮಂಡಲದೊಳು ಹರಡುತ್ತಾನೆ ಜಗದ ಅಂಚಿನ ತನಕ ಮಿಂಚು ಹೊಳೆಯುವಂತೆ ಮಾಡುತ್ತಾನೆ.</verse>
				<verse number="4">ಮಿಂಚಿನ ಬಳಿಕ ಕೇಳಿಬರುವುದು ಗರ್ಜನೆಯ ಶಬ್ದ ಗುಡುಗಿನಂಥ ಗಂಭೀರವಾದ ಆತನ ಕಂಠನಾದ ಆತನ ಸ್ವರ ಕೇಳುವಾಗ ನಿಲ್ಲದು ಮಿಂಚಿನ ಹೊಳೆತ.</verse>
				<verse number="5">ದೇವರಕಂಠ ತನ್ನ ಅದ್ಭುತಕಾರ್ಯಗಳನು ಘೋಷಿಸುತ್ತದೆ ನಮ್ಮಿಂದರಿಯಲಾಗದ ಮಹಾತ್ಕಾರ್ಯಗಳನು ಎಸಗುತ್ತಾನೆ.</verse>
				<verse number="6">ಹಿಮಕ್ಕೆ, ‘ಹದವಾಗಿ ಭೂಮಿಗೆ ಬೀಳು’ ಎನ್ನುತ್ತಾನೆ ಭಾರಿಮಳೆಗೆ, ‘ರಭಸದಿಂದ ಸುರಿ’ ಎನ್ನುತ್ತಾನೆ.</verse>
				<verse number="7">ಹೀಗೆ ಜನರೆಲ್ಲರು ಕೆಲಸ ನಿಲ್ಲಿಸುವಂತೆ ಮಾಡುತ್ತಾನೆ ತನ್ನ ಕಾರ್ಯವನು ಅರಿಯುವಂತೆ ಮಾಡುತ್ತಾನೆ.</verse>
				<verse number="8">ಆಗ ಮೃಗಗಳು ಗುಹೆ ಸೇರುತ್ತವೆ ಪ್ರಾಣಿಗಳು ಬಿಲಗಳಲೇ ತಂಗುತ್ತವೆ.</verse>
				<verse number="9">ದೇವರ ಭಂಡಾರದಿಂದ ಬಿರುಗಾಳಿ ಬೀಸುತ್ತದೆ ಉತ್ತರ ದಿಕ್ಕಿನಿಂದ ಚಳಿ ಹೊರಬರುತ್ತದೆ.</verse>
				<verse number="10">ದೇವರ ಉಸಿರಿನಿಂದ ನೀರು ಹಿಮಗಡ್ಡೆಯಾಗುತ್ತದೆ ಸವಿಸ್ತಾರದ ಜಲವು ಕೂಡ ಮಂಜುಗಡ್ಡೆಯಾಗುತ್ತದೆ.</verse>
				<verse number="11">ಮೋಡಗಳ ಮೇಲೆ ಮಂಜನು ಹೇರುತ್ತಾನೆ ಮೇಘಮಂಡಲವು ಆತನ ಮಿಂಚನು ಹರಡುತ್ತದೆ.</verse>
				<verse number="12">ಜಗದೊಳೆಲ್ಲ ಆತ ವಿಧಿಸಿದಂತೆ ಜರುಗಬೇಕೆಂದು ಸುತ್ತಮುತ್ತಲು ಸಿಡಿಲುಗಳು ಸಂಚರಿಸುವಂತೆ ಮಾಡುತ್ತಾನೆ.</verse>
				<verse number="13">ಜನರ ಶಿಕ್ಷಣಕ್ಕೆ, ಧರೆಯ ಹಿತಕೆ ತಮ್ಮ ಪ್ರೀತಿಯನ್ನು ತೋರುವುದಕೆ ಇದೆಲ್ಲ ಆಗುವಂತೆ ಮಾಡುತ್ತಾನೆ.</verse>
				<verse number="14">ಯೋಬನೇ, ಈ ಮಾತುಗಳನು ಕೇಳು ದೇವರ ಅದ್ಭುತಗಳನು ಮೌನದಿಂದ ಧ್ಯಾನಿಸು:</verse>
				<verse number="15">ದೇವರು ಹೇಗೆ ಮೋಡಗಳನು ನಿಯಂತ್ರಿಸುತ್ತಾನೆಂದು ಅರಿತಿರುವೆಯಾ? ಅವುಗಳಿಂದ ಸಿಡಿಲು ಹೇಗೆ ಹೊಳೆದುಬರುತ್ತದೆಂದು ತಿಳಿದಿರುವೆಯಾ?</verse>
				<verse number="16">ಮೋಡಗಳ ತೇಲಾಟವನು ಬಲ್ಲೆಯಾ? ಜ್ಞಾನಪೂರ್ಣನಾ ಅದ್ಭುತಕಾರ್ಯಗಳನು ಗ್ರಹಿಸಿರುವೆಯಾ?</verse>
				<verse number="17">ತೆಂಕಣಗಾಳಿಯಿಂದ ಪೊಡವಿ ತಪಿಸಿ ಸ್ತಬ್ದವಿರುವಾಗಲೆ ನಿನ್ನ ಬಟ್ಟೆಬರೆ ಬಿಸಿಯಿರುವಾಗಲೆ ಆ ಅರಿವು ನಿನಗಿರುತ್ತದೆಯೇ?</verse>
				<verse number="18">ದೇವರಂತೆ ಆಕಾಶಮಂಡಲವನು ನಿನ್ನಿಂದ ನಿರ್ಮಿಸಲಾದೀತೆ? ಎರಕ ಹೊಯ್ದು ಕನ್ನಡಿಯಂತೆ ಅದನು ಗಟ್ಟಿಮಾಡಲಾದೀತೆ?</verse>
				<verse number="19">ಆತನಿಗೆ ಹೇಳಬೇಕಾದ ಉತ್ತರವನು ನಮಗೆ ತಿಳಿಸು ಅಂಧಕಾರದಲ್ಲಿರುವ ನಮ್ಮಿಂದ ಏನೊಂದನೂ ಹೇಳಲಾಗದು.</verse>
				<verse number="20">ನಾನು ಮಾತಾಡಬೇಕೆಂದು ದೇವರಿಗೆ ಹೇಳಿಕಳಿಸಲಾದೀತೆ? ಹಾಗೆ ಮಾಡುವವನು ತನ್ನನ್ನೆ ನಿರ್ಮೂಲ ಮಾಡಿಕೊಂಡಂತೆ!</verse>
				<verse number="21">ಗಾಳಿಬೀಸಿ ಗಗನವನು ಶುಭ್ರಗೊಳಿಸಲು ಅಲ್ಲಿ ಪ್ರಜ್ವಲಿಸುವ ಬೆಳಕನು ದೃಷ್ಟಿಸಲಾಗದು.</verse>
				<verse number="22">ಉತ್ತರದಿಂದ ಹೊನ್ನಿನ ಹೊಳಪು ಹೊರಡುವುದು ದೇವರು ವಿಸ್ಮಯಕರ ತೇಜಸ್ಸನು ಧರಿಸಿರುವನು.</verse>
				<verse number="23">ಕಂಡುಹಿಡಿಯಲಾಗದು ಇಂಥ ಸರ್ವಶಕ್ತನನು ನಮ್ಮಿಂದ ಶಕ್ತಿಯಲೂ ಸತ್ಯದಲೂ ಪರಮ ಪರಾಕ್ರಮಿ ಆತ ನ್ಯಾಯಪೂರ್ಣನಾದ ಆತ ದಬ್ಬಾಳಿಕೆ ನಡೆಸುವವನಲ್ಲ ನ್ಯಾಯಕ್ಕಾಗಲೀ ಧರ್ಮಕ್ಕಾಗಲೀ ಆತ ಧಕ್ಕೆ ತರುವವನಲ್ಲ.</verse>
				<verse number="24">ಎಂತಲೇ ಜನರಿಗೆ ಆತನಲ್ಲಿದೆ ಭಯಭಕ್ತಿ ತಾವೇ ಜ್ಞಾನಿಗಳೆಂದುಕೊಳ್ಳುವವರಲಿ ದೇವರಿಗಿಲ್ಲ ಲಕ್ಷ್ಯ.”</verse>
			</chapter>
			<chapter number="38">
				<verse number="1">ಬಿರುಗಾಳಿಯೊಳಗಿಂದ ಸರ್ವೇಶ್ವರ ಯೋಬನಿಗೆ ಕೊಟ್ಟ ಪ್ರತ್ಯುತ್ತರ ಇದು:</verse>
				<verse number="2">“ಅಜ್ಞಾನದ ಮಾತುಗಳನ್ನಾಡಿ ಸತ್ಯಾಲೋಚನೆಯನು ಮಂಕುಮಾಡುವ ನೀನಾರು?</verse>
				<verse number="3">ಶೂರನಂತೆ ನಡುಕಟ್ಟಿ ನಿಲ್ಲು ನಾನು ಹಾಕುವ ಪ್ರಶ್ನೆಗೆ ಉತ್ತರ ನೀಡು:</verse>
				<verse number="4">ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನೆಲ್ಲಿದ್ದೆ? ಉತ್ತರಕೊಡು, ನೀನು ಅಷ್ಟು ಜ್ಞಾನಿಯಾಗಿದ್ದರೆ.</verse>
				<verse number="5">ಅದರಳತೆಯನ್ನು ಗೊತ್ತುಮಾಡಿದವನಾರೆಂದು ನಿನಗೆ ತಿಳಿದಿದೆಯೆ? ಅದರ ಮೇಲೆ ನೂಲು ಹಿಡಿದವನಾರೆಂದು ನಿನಗೆ ಗೊತ್ತಿದೆಯೆ?</verse>
				<verse number="6">ಉದಯ ನಕ್ಷತ್ರಗಳ ಜಯಕಾರದ ನಡುವೆ ದೇವದೂತರೆಲ್ಲರ ಆನಂದಘೋಷಣೆಯ ಮಧ್ಯೆ,</verse>
				<verse number="7">ಭೂಮಿಗೆ ಮೂಲೆಗಲ್ಲನು ಹಾಕಿದವನಾರು? ಅದರ ಅಡಿಗಲ್ಲು ಯಾವುದರ ಮೇಲೆ ನಿಂತಿದೆ?”</verse>
				<verse number="8">“ಭೂಗರ್ಭವನ್ನು ಭೇದಿಸಿಕೊಂಡು ಬಂದ ಸಮುದ್ರವನು ದ್ವಾರಗಳಿಂದ ಬಂಧಿಸಿ ಮುಚ್ಚಿದವನಾರು?</verse>
				<verse number="9">ಅದಕ್ಕೆ ಮೋಡಗಳನು ತೊಡಿಸಿ, ಕಾರ್ಗತ್ತಲನು ಉಡಿಸಿದವನು ಯಾರು?</verse>
				<verse number="10">ಅದಕ್ಕೆ ಸರಹದ್ದನು ನಿಯಮಿಸಿ ಕದಗಳನೂ ಅಗುಳಿಗಳನೂ ಇಟ್ಟವನಾರು?</verse>
				<verse number="11">‘ಇಲ್ಲಿಯತನಕ ಬರಬಹುದು, ಇದನು ಮೀರಿ ಬರಕೂಡದು’ ‘ಮೊರೆವ ನಿನ್ನ ತೆರೆಗೆ ಇಲ್ಲಿಗೇ ತಡೆ’ ಎಂದು ವಿಧಿಸಿದವನು ನಾನು.</verse>
				<verse number="12">ನಿನ್ನ ಜೀವಮಾನದಲಿ ಎಂದಾದರೂ ‘ಅರುಣೋದಯವಾಗಲಿ’ ಎಂದು ಆಜ್ಞಾಪಿಸಿರುವೆಯಾ?</verse>
				<verse number="13">‘ಧರಣಿಯ ಅಂಚುಗಳನು ಹಿಡಿದು ದುರುಳರನ್ನು ಅದರೊಳಗಿಂದ ಒದರಿಬಿಡು’ ಎಂದು ಅದಕ್ಕೆ ಅಪ್ಪಣೆಮಾಡಿದೆಯಾ?</verse>
				<verse number="14">ಮುದ್ರೆ ಒತ್ತಿದ ಜೇಡಿಮಣ್ಣಿನಂತೆ ಭೂಮಿ ರೂಪತಾಳುತ್ತದೆ ಅದು ನೆರಿಗೆ ಕಟ್ಟಿದ ಉಡಿಗೆಯಂತೆ ಕಾಣಿಸುತ್ತದೆ.</verse>
				<verse number="15">ದುರುಳರಿಂದ ಬೆಳಕನು ಹಿಂತೆಗೆದುಕೊಳ್ಳಲಾಗುವುದು ಅವರು ಎತ್ತಿದ ಕೈಯನು ಮುರಿಯಲಾಗುವುದು.</verse>
				<verse number="16">ನೀನೆಂದಾದರು ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ? ಸಾಗರದ ತಳಹದಿಯಲ್ಲಿ ತಿರುಗಾಡಿರುವೆಯೋ?</verse>
				<verse number="17">ಮರಣದ ದ್ವಾರಗಳು ನಿನಗೆ ಗೋಚರವಾಗಿರುವುವೋ? ಘೋರಾಂಧಕಾರದ ಕದಗಳನ್ನು ನೀನು ಕಂಡಿರುವೆಯೋ?</verse>
				<verse number="18">ಭೂವಿಸ್ತಾರವನ್ನು ಗ್ರಹಿಸಿರುವೆಯೋ? ಇದೆಲ್ಲವು ನಿನಗೆ ತಿಳಿದಿದ್ದರೆ ಹೇಳು, ನೋಡೋಣ!</verse>
				<verse number="19">ಬೆಳಕಿನ ನಿವಾಸಕ್ಕೆ ಹೋಗುವ ಮಾರ್ಗವೆಲ್ಲಿ? ಕತ್ತಲು ವಾಸಮಾಡುವ ಸ್ಥಳವೆಲ್ಲಿ?</verse>
				<verse number="20">ನೀನು ಅವುಗಳನು ಅವುಗಳ ಪ್ರಾಂತ್ಯಕ್ಕೆ ಕರೆದೊಯ್ಯಬಲ್ಲೆಯಾ? ಅವುಗಳ ನಿವಾಸಕೆ ಹಾದಿಯನು ಕಂಡುಹಿಡಿಯಬಲ್ಲೆಯಾ?</verse>
				<verse number="21">ಇದನ್ನು ಬಲ್ಲೆಯಾದರೆ ನೀನು ಆಗಲೇ ಹುಟ್ಟಿದ್ದಿರಬೇಕು ಮತ್ತು ಈಗ ಬಹಳ ವೃದ್ಧನಾಗಿರಬೇಕು!</verse>
				<verse number="22">ಹಿಮದ ಭಂಡಾರವನು ಹೊಕ್ಕಿರುವೆಯಾ? ಕಲ್ಮಳೆಯ ಬೊಕ್ಕಸವನು ನೋಡಿರುವೆಯಾ?</verse>
				<verse number="23">ಇಕ್ಕಟ್ಟಿನ ಕಾಲಕ್ಕಾಗಿ ಅವುಗಳನು ನಾನು ಇಟ್ಟಿರುವೆನು ಯುದ್ಧಕದನಗಳ ದಿನಗಳಿಗಾಗಿ ನಾನು ಕಾದಿಟ್ಟಿರುವೆನು.</verse>
				<verse number="24">ಬೆಳಕು ಏರಿಬರುವ ಜಾಗವೆಲ್ಲಿ? ಬಿಸಿಗಾಳಿ ಬೀಸಿಬರುವ ಮಾರ್ಗವೆಲ್ಲಿ?</verse>
				<verse number="25">ಮನುಜರಿಲ್ಲದ ಕಾಡಿನಲ್ಲೂ ನಿರ್ಜನಪ್ರದೇಶದಲ್ಲೂ ಮಳೆಯನು ಹೊಯ್ದು,</verse>
				<verse number="26">ಹಾಳುಬೀಳಾದ ಭೂಮಿಯನು ತೋಯಿಸಲೆಂದು ಪಚ್ಚೆಪಸಿರಾದ ಹುಲ್ಲನು ಬೆಳೆಯಿಸಲೆಂದು,</verse>
				<verse number="27">ವೃಷ್ಟಿಯ ಪ್ರವಾಹಕ್ಕೆ ಕಾಲುವೆಯನು ಕಡಿದವರಾರು? ಗರ್ಜಿಸುವ ಸಿಡಿಲಿಗೆ ದಾರಿಯನು ಮಾಡಿದವರಾರು?</verse>
				<verse number="28">ಮಳೆಗೆ ತಂದೆಯೊಬ್ಬನಿದ್ದಾನೆಯೆ? ಮಂಜಿನ ಹನಿಗೆ ಹೆತ್ತವಳಿದ್ದಾಳೆಯೆ?</verse>
				<verse number="29">ಹಿಮಗಡ್ಡೆ ಹೊರಡುವುದು ಯಾರ ಗರ್ಭದಿಂದ? ಆಕಾಶದ ಇಬ್ಬನಿ ಜನಿಸುವುದು ಯಾವ ತಾಯಿಂದ?</verse>
				<verse number="30">ಕಲ್ಲಿನಂತೆ ನೀರು ಗಟ್ಟಿಯಾಗುತ್ತದೆ ಸಾಗರದ ಮೇಲ್ಭಾಗ ಹೆಪ್ಪುಗಟ್ಟುತ್ತದೆ.</verse>
				<verse number="31">ಕೃತ್ತಿಕೆಯ ಸರಪಣಿಯನು ನೀನು ಬಿಗಿಯಬಲ್ಲೆಯಾ? ಮೃಗಶಿರದ ಸಂಕೋಲೆಯನು ಬಿಚ್ಚಬಲ್ಲೆಯಾ?</verse>
				<verse number="32">ಆಯಾಯ ಕಾಲಕ್ಕೆ ನಕ್ಷತ್ರರಾಶಿಗಳನು ಬರಮಾಡುವೆಯಾ? ಸಪ್ತರ್ಷಿತಾರೆಗಳನು ಪರಿವಾರದೊಡನೆ ನಡೆಸುವೆಯಾ?</verse>
				<verse number="33">ಖಗೋಳದ ನಿಯಮಗಳನು ತಿಳಿದಿರುವೆಯಾ? ಅದರ ಆಳ್ವಿಕೆಯನು ಇಳೆಯೊಳು ಸ್ಥಾಪಿಸಿರುವೆಯಾ?</verse>
				<verse number="34">ನಿನ್ನಾಜ್ಞೆ ಮೋಡ ಮುಟ್ಟಿದ ಮಾತ್ರಕೆ ಹೇರಳವಾದ ನೀರು ನಿನ್ನನು ಆವರಿಸುವುದೊ?</verse>
				<verse number="35">ನಿನ್ನ ಅಪ್ಪಣೆಯಂತೆ ಸಿಡಿಲುಗಳು ಹೋಗಿಬಂದು ‘ಇದೋ ಬಂದಿದ್ದೇವೆ’ ಎಂದು ನಿನಗೆ ಹೇಳುತ್ತವೆಯೊ?</verse>
				<verse number="36">ಜ್ಞಾನವನು ದಯಪಾಲಿಸಿದವನಾರು ಇಬಿಸ್ ಪಕ್ಷಿಗೆ? ವಿವೇಕವನು ಅನುಗ್ರಹಿಸಿದವನಾರು ಕೋಳಿಹುಂಜಕ್ಕೆ</verse>
				<verse number="37">ಯಾರಿಗಿದೆ ಮೋಡಗಳನು ಲೆಕ್ಕಿಸುವ ಶಕ್ತಿ? ಆಕಾಶದಲ್ಲಿನ ಬುದ್ದಲಿಗಳನು ಮೊಗಚಿಹಾಕುವ ಬುದ್ಧಿಶಕ್ತಿ?</verse>
				<verse number="38">ದೂಳುಮಣ್ಣನು ಒತ್ತಟ್ಟಿಗೆ ಸೇರಿಸಬಲ್ಲವನಾರು? ಹೆಂಟೆಗಳು ಒಂದಕ್ಕೊಂದು ಅಂಟಿಕೊಳ್ಳುವಂತೆ ಮಾಡಬಲ್ಲವನಾರು?</verse>
				<verse number="39">ಗುಹೆಯಲ್ಲಿ ಮಲಗಿರುವ ಸಿಂಹಕೆ ಬೇಟೆಯಾಡಿ ಊಟ ಒದಗಿಸಬಲ್ಲೆಯಾ ನೀನು?</verse>
				<verse number="40">ಪೊದೆಯಲ್ಲಿ ಹೊಂಚುಕೂತಿರುವ ಯುವಸಿಂಹಕೆ ಹಸಿವನು ನೀಗಿಸಬಲ್ಲೆಯಾ ನೀನು?</verse>
				<verse number="41">ಆಹಾರವನು ಒದಗಿಸುವವರಾರು ತಾಯಿ ಕಾಗೆಗೆ ಅದರ ಹಸಿದ ಮರಿಗಳು ಕೊಕ್ಕೆತ್ತಿ ದೇವರಿಗೆ ಮೊರೆಯಿಡುವಾಗ?</verse>
			</chapter>
			<chapter number="39">
				<verse number="1">“ಕಾಡುಮೇಕೆ ಈಯುವ ವೇಳೆಯನು ತಿಳಿದಿರುವೆಯಾ? ಹುಲ್ಲೆಗಳ ಹೆರಿಗೆಯನು ಗ್ರಹಿಸಿರುವೆಯಾ?</verse>
				<verse number="2">ಎಣಿಸಿರುವೆಯಾ ಅವು ಗರ್ಭಹೊರುವ ತಿಂಗಳನು? ಗೊತ್ತುಹಚ್ಚಿರುವೆಯಾ ಅವು ಈಯುವ ವೇಳೆಯನು?</verse>
				<verse number="3">ಅವು ಬಗ್ಗಿ ಮರಿಹಾಕುತ್ತವೆ ಒಡನೆಯೆ ವೇದನೆಯನು ಮರೆತುಬಿಡುತ್ತವೆ.</verse>
				<verse number="4">ಅವುಗಳ ಮರಿಗಳು ಪುಷ್ಟಿಯಾಗಿ ಬಯಲಿನಲ್ಲಿ ಬೆಳೆಯುತ್ತವೆ ತಾಯಿಯನ್ನು ಅಗಲಿದ ಬಳಿಕ ಅವು ಮರಳಿ ಬರುವುದಿಲ್ಲ.</verse>
				<verse number="5">ಕಾಡುಕತ್ತೆಗೆ ಸ್ವಾತಂತ್ರ್ಯವನು ಕೊಟ್ಟವರಾರು? ಅದರ ಕಟ್ಟನು ಬಿಚ್ಚಿದವರಾರು?</verse>
				<verse number="6">ಅದಕ್ಕೆ ಅಡವಿಯನೆ ಮನೆಯನ್ನಾಗಿಸಿದವನು ನಾನು ಸವಳುಬಯಲನೇ ಅದರ ನಿವಾಸವಾಗಿಸಿದವನು ನಾನು.</verse>
				<verse number="7">ಅದು ಧಿಕ್ಕರಿಸುತ್ತದೆ ಊರಗದ್ದಲವನು ಅದು ಕೇಳಿದ್ದಿಲ್ಲ ಓಡಿಸುವವನ ಕೂಗನು.</verse>
				<verse number="8">ಎತ್ತರವಾದ ಬೆಟ್ಟಗಳೇ ಅದರ ಕಾವಲು ಹಸಿರೆಲ್ಲಿದ್ದರೂ ಅದುವೆ ಅದರಸುವ ಮೇವು.</verse>
				<verse number="9">ಕಾಡುಕೋಣ ಒಪ್ಪಿದೆಯೇ ನಿನಗೆ ಸೇವೆಮಾಡಲು? ನಿನ್ನ ಗೋದಲಿಯ ಹತ್ತಿರವೇ ತಂಗಿರಲು?</verse>
				<verse number="10">ಕಟ್ಟಬಲ್ಲೆಯಾ ಅದನು ಹಗ್ಗದಿಂದ ನೇಗಿಲ ಸಾಲಿಗೆ ಕುಂಟೆ ಎಳೆಯಲು ಅದು ನಿನ್ನ ಹಿಂದೆ?</verse>
				<verse number="11">ಬಲವಿದೆಯೆಂದು ಅದರಲಿ ನಂಬಿಕೆಯಿಡುವೆಯಾ? ಬಲಿಷ್ಠಕಾರ್ಯಗಳನು ಅದಕ್ಕೆ ಒಪ್ಪಿಸಿಬಿಡುವೆಯಾ?</verse>
				<verse number="12">ಬೆಳೆಯನು ಅದು ನಿನಗೆ ಹೊತ್ತು ತರುವುದೆಂದು ನಂಬುವೆಯಾ? ಕಣದಲಿ ನಿನಗೆ ಕಾಳನು ಕೂಡಿಸುವುದೆಂಬ ನಂಬಿಕೆ ನಿನಗಿದೆಯಾ?</verse>
				<verse number="13">ಉಷ್ಟ್ರಪಕ್ಷಿ ಲವಲವಿಕೆಯಿಂದ ರೆಕ್ಕೆಬಡಿಯುತ್ತದೆ ಆದರೆ ಪ್ರೀತಿವ್ಯಾಮೋಹವಿದೆಯೆ ಅದರ ರೆಕ್ಕೆ ಗರಿಗಳಿಗೆ?</verse>
				<verse number="14">ಮೊಟ್ಟೆಗಳನು ಭೂಮಿಯ ಮೇಲೆ ಬಿಟ್ಟುಬಿಡುವಾ ಪಕ್ಷಿ, ಕೇವಲ ಧೂಳಿನಿಂದ ಅವಕ್ಕೆ ಕಾವು ಕೊಡುತ್ತದೆ, ಅಲ್ಲವೆ?</verse>
				<verse number="15">ಆ ಮೊಟ್ಟೆಗಳನು ಜನರು ಕಾಲಿನಿಂದ ಮೆಟ್ಟಿಯಾರು ಕಾಡುಮೃಗ ಅವುಗಳನು ತುಳಿದೀತು ಎಂಬ ಯೋಚನೆ ಅದನು ಕಾಡದು.</verse>
				<verse number="16">ತನ್ನ ಮರಿ ತನ್ನದೇ ಅಲ್ಲ ಎಂಬಷ್ಟು ಕ್ರೂರತೆ ಅದರದು ತನ್ನ ಹೆರಿಗೆ ನಿಷ್ಫಲವಾಯಿತೆಂಬ ಸಂಕಟ ಅದಕ್ಕಿರದು.</verse>
				<verse number="17">ಅದಕ್ಕೆ ನಾನು ಕೊಡಲಿಲ್ಲ ಜ್ಞಾನವನು ದಯಪಾಲಿಸಲಿಲ್ಲ ಗ್ರಹಿಕೆಯನು.</verse>
				<verse number="18">ಆದರೂ ಅದು ರೆಕ್ಕೆ ಬಡಿದು ದೌಡಾಯಿಸುವಾಗಲಂತು ಕುದುರೆ ರಾಹುತರನೂ ಅಣಕಿಸಬಲ್ಲದು.</verse>
				<verse number="19">ಕುದುರೆಗೆ ಶಕ್ತಿಕೊಟ್ಟವನು ನೀನೋ? ಅದರ ಕೊರಳಿಗೆ ಜುಟ್ಟುಗುಡುಗನ್ನು ಕಟ್ಟಿದವನು ನೀನೋ?</verse>
				<verse number="20">ಮಿಡತೆಯ ಹಾಗೆ ಅದು ಜಿಗಿಯಮಾಡಿದವನು ನೀನೋ? ಅದರ ಕೆನೆತದ ಪ್ರಭಾವ ಭೀತಿಯನು ತರುತ್ತದೆ, ನೋಡು!</verse>
				<verse number="21">ನೆಲವನು ಕೆರೆಯುತ್ತಾ, ತನ್ನ ಶಕ್ತಿಗಾಗಿ ಹಿಗ್ಗುತ್ತಾ ಸನ್ನದ್ಧ ಸೈನ್ಯವನು ಇದಿರಿಸುತ್ತಾ ನುಗ್ಗುತ್ತದೆ ನೋಡು!</verse>
				<verse number="22">ಖಡ್ಗಕ್ಕೆ ಹಿಂದೆಗೆಯದೆ, ಕಳವಳಗೊಳ್ಳದೆ ಭಯಭೀತಿಗೆ ಹೆದರದೆ ನಗುತ್ತದೆ!</verse>
				<verse number="23">ಅದರ ಮೇಲಿನ ಬತ್ತಳಿಕೆ ಜಣಜಣಿಸುತ್ತದೆ ಈಟಿ ಭರ್ಜಿಗಳು ಥಳಥಳಿಸುತ್ತವೆ.</verse>
				<verse number="24">ಕಹಳೆಯ ನಾದಕೇಳಿ ನಿಲ್ಲದದು ಸುಮ್ಮನೆ ಉದ್ರೇಕಗೊಂಡು ದೌಡಾಯಿಸುತ್ತದೆ ವೇಗವನೇ ನುಂಗುವಂತೆ.</verse>
				<verse number="25">ರಣಕಹಳೆ ಮೊಳಗಿದಾಗಲೆ ಕೆನೆಯುತ್ತದೆ ಕಾಳಗ, ಆರ್ಭಟ, ದಳಪತಿಗಳ ಗರ್ಜನೆ ಇವುಗಳನ್ನೆಲ್ಲಾ ದೂರದಿಂದಲೆ ಮೂಸುತ್ತದೆ.</verse>
				<verse number="26">ಗಿಡುಗವು ರೆಕ್ಕೆ ಹರಡುವುದನು ದಕ್ಷಿಣದಿಕ್ಕಿಗೆ ಹಾರಿ ವಲಸೆಹೋಗುವುದನು ನಿನ್ನಿಂದ ಕಲಿತದೆಂತು?</verse>
				<verse number="27">ರಣಹದ್ದಿಗೆ ನಿನ್ನಪ್ಪಣೆ ಬೇಕೋ ಮೇಲೆ ಹಾರುವುದಕೆ? ನಿನ್ನ ಸಮ್ಮತಿ ಬೇಕೋ ಉನ್ನತ ಸ್ಥಳದಲ್ಲಿ ಗೂಡು ಕಟ್ಟುವುದಕೆ?</verse>
				<verse number="28">ಅದು ವಾಸಮಾಡುತ್ತದೆ ಕಲ್ಲು ಬಂಡೆ ಮೇಲೆ ಅದು ತಂಗುತ್ತದೆ ಶಿಲಾಶಿಖರದ ದುರ್ಗದೊಳಗೆ.</verse>
				<verse number="29">ಬೇಟೆಯನು ನೋಡುತ್ತದೆ ಅಲ್ಲಿಂದಲೆ ಅದನ್ನು ಕಂಡು ಹಿಡಿಯುತ್ತದೆ ದೂರದಿಂದಲೆ.</verse>
				<verse number="30">ಹೆಣ ಬಿದ್ದಲ್ಲಿ ರಣಹದ್ದು ಅದರ ಮರಿಗಳೂ ಹೀರುತ್ತವೆ ರಕ್ತವನು.”</verse>
			</chapter>
			<chapter number="40">
				<verse number="1">ಯೋಬನಿಗೆ ಸರ್ವೇಶ್ವರ ಮತ್ತೆ ಇಂತೆಂದನು:</verse>
				<verse number="2">“ಸರ್ವಶಕ್ತನೊಡನೆ ವ್ಯಾಜ್ಯವಾಡುವುದನು ಈಗಲಾದರು ನಿಲ್ಲಿಸುವೆಯಾ? ದೇವರೊಡನೆ ತರ್ಕಮಾಡುವಂಥ ನೀನು ಉತ್ತರಕೊಡುವೆಯಾ?”</verse>
				<verse number="3">	ಆಗ ಯೋಬನು ಸರ್ವೇಶ್ವರಸ್ವಾಮಿಗೆ ಇಂತೆಂದನು:</verse>
				<verse number="4">“ಅಯ್ಯೋ, ನಾನು ಅಲ್ಪನೇ ಸರಿ ತಮಗೇನು ಪ್ರತ್ಯುತ್ತರ ಹೇಳಲಿ? ಬಾಯ ಮೇಲೆ ಕೈಯಿಡುವೆ ಮೌನತಾಳಿ.</verse>
				<verse number="5">ಒಮ್ಮೆ ಮಾತಾಡಿದೆ, ಮತ್ತೆ ಮಾತಾಡೆನು ಹೌದು, ಇನ್ನೊಮ್ಮೆ ಮಾತಾಡಿದೆ, ಹೆಚ್ಚು ಮಾತಾಡೆನು.”</verse>
				<verse number="6">	 ಸರ್ವೇಶ್ವರ ಬಿರುಗಾಳಿಯೊಳಗಿಂದ ಯೋಬನಿಗೆ ಕೊಟ್ಟ ಪ್ರತ್ಯುತ್ತರವಿದು:</verse>
				<verse number="7">“ಶೂರನಂತೆ ನಡುಕಟ್ಟಿಕೊಂಡು ನನ್ನ ಪ್ರಶ್ನೆಗೆ ಉತ್ತರಕೊಡು:</verse>
				<verse number="8">ಏನು, ನನ್ನ ನಿರ್ಣಯವನ್ನು ನೀನು ಖಂಡಿಸುತ್ತೀಯೋ? ನೀನು ನಿರ್ದೋಷಿಯೆನಿಸಿಕೊಳ್ಳಲು ನನ್ನನ್ನು ದೋಷಿಯನ್ನಾಗಿಸುತ್ತೀಯೋ?</verse>
				<verse number="9">ದೇವರಾದ ನನಗಿರುವಂಥ ಭುಜಬಲ ನಿನಗಿದೆಯೋ? ನನ್ನ ಧ್ವನಿಗೆ ಸಮನಾಗಿ ನೀನು ಗುಡುಗಬಲ್ಲೆಯೋ?</verse>
				<verse number="10">ಮಹಿಮೆ ಘನತೆಗಳಿಂದ ಅಲಂಕರಿಸಿಕೊ! ಗೌರವ ಪ್ರಭಾವಗಳನು ಧರಿಸಿಕೊ!</verse>
				<verse number="11">ನಿನ್ನ ಕಡುಕೋಪವನು ಎಲ್ಲೆಡೆಯೂ ಹರಡಿಸು ಕಣ್ಣಿಟ್ಟು ಗರ್ವಿಷ್ಠರೆಲ್ಲರನು ತಗ್ಗಿಸು.</verse>
				<verse number="12">ಹೌದು, ಕಣ್ಣಿಟ್ಟು ಗರ್ವಿಷ್ಠರೆಲ್ಲರನು ತಗ್ಗಿಸು ದುಷ್ಟರನು ನಿಂತಲ್ಲೇ ತುಳಿದುಬಿಡು.</verse>
				<verse number="13">ಅವರೆಲ್ಲರನು ಧೂಳಿನಲ್ಲಿ ಒಟ್ಟಿಗೆ ಅಡಗಿಸಿಬಿಡು ಅವರ ಮುಖಕ್ಕೆ ಅಧೋಲೋಕದಲಿ ಮುಸುಕುಹಾಕು.</verse>
				<verse number="14">ಆಗ ನಿನ್ನ ಬಲ ನಿನ್ನನು ರಕ್ಷಿಸಬಲ್ಲದೆಂದು ನಾನೇ ಒಪ್ಪಿಕೊಳ್ಳುವೆನು.</verse>
				<verse number="15">ಸೃಷ್ಟಿಮಾಡಿದೆನು ನೀರಾನೆಯನು ನಿನ್ನ ಹಾಗೆ ಅದು ಹುಲ್ಲನು ಮೇಯುತ್ತದೆ ಎತ್ತಿನ ಹಾಗೆ.</verse>
				<verse number="16">ಅದರ ಬಲ ಇರುವುದು ಸೊಂಟದಲಿ ಅದರ ತ್ರಾಣ ಹೊಟ್ಟೆಯ ನರಗಳಲಿ.</verse>
				<verse number="17">ಬಾಲವನ್ನು ಬಾಗಿಸುತ್ತದೆ ದೇವದಾರು ಮರದಂತೆ ಅದರ ನರಗಳೋ ಹೆಣೆದುಕೊಂಡಿವೆ.</verse>
				<verse number="18">ಅದರ ಮೂಳೆಗಳಿವೆ ಕಂಚಿನ ನಳಿಕೆಗಳಂತೆ ಅದರ ಎಲುಬುಗಳಿವೆ ಕಬ್ಬಿಣದ ಹಾರೆಗಳಂತೆ.</verse>
				<verse number="19">ದೈವಸೃಷ್ಟಿಗಳಲ್ಲಿ ಅದು ಮುಖ್ಯವಾದುದು ಸೃಷ್ಟಿಕರ್ತನು ಅದಕ್ಕೆ ಕೊಟ್ಟಿರುವನು ಕೋರೆಹಲ್ಲಿನ ಖಡ್ಗವನ್ನು.</verse>
				<verse number="20">ಅದಕ್ಕೆ ಮೇವು ಕೊಡುತ್ತವೆ ಬೆಟ್ಟಗುಡ್ಡಗಳು ಅಲ್ಲಿ ಅಲೆದಾಡುತ್ತಿರುತ್ತವೆ ಕಾಡು ಮೃಗಗಳು.</verse>
				<verse number="21">ಅದು ಮಲಗುತ್ತದೆ ತಾವರೆ ಗಿಡಗಳಡಿಯಲಿ ವಿಶ್ರಮಿಸುತ್ತದೆ ಆಪಿನ ಮರೆಯಲಿ, ಕೆಸರು ಭೂಮಿಯಲಿ.</verse>
				<verse number="22">ಅದಕ್ಕೆ ನೆರಳನ್ನೀಯುತ್ತವೆ ತಾವರೆ ಎಲೆಗಳು ಅದರ ಸುತ್ತಲಿರುತ್ತವೆ ನದಿಯ ನೀರವಂಜಿಗಳು.</verse>
				<verse number="23">ಹೊಳೆ ಉಕ್ಕಿಬಂದರೂ ಅದು ಹೆದರುವುದಿಲ್ಲ ನೋಡು ಜೋರ್ಡನ್ ನದಿ ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು!</verse>
				<verse number="24">ಅದು ನೋಡುವಾಗ ಯಾವನಾದರು ಅದನು ಹಿಡಿಯಬಲ್ಲನೆ? ಗಾಳದಿಂದ ಯಾವನಾದರು ಅದರ ಮೂಗನು ಚುಚ್ಚಬಲ್ಲನೆ?”</verse>
			</chapter>
			<chapter number="41">
				<verse number="1">“’ಲಿವ್ಯತಾನ್’ ಮೊಸಳೆಯನು ಗಾಳದಿಂದ ಎಳೆಯಬಲ್ಲೆಯಾ? ಅದರ ನಾಲಿಗೆಯನು ಹಗ್ಗದಿಂದ ಬಿಗಿಯಬಲ್ಲೆಯಾ?</verse>
				<verse number="2">ಅದರ ಮೂಗಿಗೆ ಆಪನು ಪೋಣಿಸಬಲ್ಲೆಯಾ? ಅದರ ದವಡೆಗೆ ಮುಳ್ಳನು ಚುಚ್ಚಬಲ್ಲೆಯಾ?</verse>
				<verse number="3">ಅದು ನಿನ್ನ ಸಂಗಡ ಸವಿಮಾತಾಡೀತೆ? ನಿನಗೆ ವಿನಮ್ರ ವಿಜ್ಞಾಪನೆ ಮಾಡೀತೆ?</verse>
				<verse number="4">ನೀನದನ್ನು ನಿನ್ನ ಚಿರದಾಸನನ್ನಾಗಿಸಿಕೊಳ್ಳುವಂತೆ ನಿನ್ನೊಡನೆ ಅದು ಒಪ್ಪಂದ ಮಾಡಿಕೊಂಡೀತೆ?</verse>
				<verse number="5">ಅದನು ಹಕ್ಕಿಯಂತೆ ಆಡಿಸಬಲ್ಲೆಯಾ? ಆಟಕ್ಕೆಂದು ಹುಡುಗಿಯರಿಗೆ ಹಿಡಿದುಕೊಡಬಲ್ಲೆಯಾ?</verse>
				<verse number="6">ಬೆಸ್ತರು ಅದನು ವ್ಯಾಪಾರಕ್ಕೆ ಇಡುವರೇ? ಪಾಲುಮಾಡಿಕೊಂಡು ಅದನು ವರ್ತಕರಿಗೆ ಮಾರುವರೆ?</verse>
				<verse number="7">ಅದರ ಚರ್ಮವನು ಕೊಂಡಿಗಳಿಂದ ಚುಚ್ಚಬಲ್ಲೆಯಾ? ಅದರ ತಲೆಯನು ಮೀನು ಹಿಡಿಯುವ ಭರ್ಜಿಯಿಂದ ತಿವಿಯಬಲ್ಲೆಯಾ?</verse>
				<verse number="8">ಅದರ ಮೇಲೆ ಒಮ್ಮೆ ಕೈಹಾಕಿ ನೋಡು! ಆಗ ನಡೆಯಬಹುದಾದ ಕದನವನು ನೆನೆಸಿಕೊಂಡರೆ ಸಾಕು! ನೀನು ಮತ್ತೆ ಮುಟ್ಟಹೋಗಲಾರೆ ಅದನು.</verse>
				<verse number="9">ಅದನು ಹಿಡಿಯಬಹುದೆಂಬ ನಂಬಿಕೆ ವ್ಯರ್ಥ ಹಿಡಿಯಬಂದವನು ನೋಡಿದ್ದೇ ಬಿದ್ದುಹೋದ.</verse>
				<verse number="10">ಅದನು ಕೆಣಕಲು ಧೈರ್ಯಗೊಂಡಾಗ ಅದು ಉಗ್ರವಾಗುತ್ತದೆ ‘ನನ್ನ ಮುಂದೆ ನಿಲ್ಲಬಲ್ಲವರಾರು?’ ಎನ್ನುತ್ತದೆ.</verse>
				<verse number="11">ಅದನ್ನೆದುರಿಸಿ ಸುರಕ್ಷಿತವಾಗಿ ಇರಬಲ್ಲವನಾರು? ಗಗನದ ಕೆಳಗಿರುವ ಯಾರಿಂದಲೂ ಅದಾಗದು.</verse>
				<verse number="12">ಅದರ ಅಂಗಗಳನು, ಶಕ್ತಿಯನು, ಸೊಬಗನು ನಾನು ವರ್ಣಿಸದೆ ಮುಚ್ಚಿಡಲಾಗದು.</verse>
				<verse number="13">ಅದರ ಹೊರ ಕವಚವನು ಬಿಚ್ಚಬಲ್ಲವರಾರು? ಅದರ ಜೊಡುದವಡೆಗಳಲಿ ನುಗ್ಗಬಲ್ಲವರಾರು?</verse>
				<verse number="14">ಅದರ ಮುಖದ ಕದಗಳನು ತೆರೆಯ ಬಲ್ಲವರಾರು? ಅದರ ಹಲ್ಲುಗಳ ಸುತ್ತಲೂ ಭಯಭೀತಿ ಆವರಿಸಿರುವುದು.</verse>
				<verse number="15">ಬೆನ್ನಿನ ಅಡ್ಡಣಗಳು ಅದಕ್ಕೆ ಕೊಟ್ಟಿವೆ ಕೆಚ್ಚನು ಒತ್ತಿದ ಮುದ್ರೆಯಂತೆ ಬಿಗಿದಿವೆ ಅದನು.</verse>
				<verse number="16">ಗಾಳಿ ಕೂಡ ನುಗ್ಗದಂತೆ ಆ ಅಡ್ಡಣಗಳು ಹೊಂದಿಕೊಂಡಿವೆ ಒಂದಕ್ಕೊಂದು.</verse>
				<verse number="17">ಪ್ರತ್ಯೇಕಿಸಲಾಗದಂತೆ ಅಂಟಿಕೊಂಡಿವೆ ವಿಂಗಡಿಸಲಾಗದಂತೆ ಹಿಡಿದುಕೊಂಡಿವೆ.</verse>
				<verse number="18">ಅದರ ಸೀನಿನ ತುಂತುರುಗಳು ಥಳಥಳಿಸುತ್ತವೆ ಅದರ ಕಣ್ಣುಗಳು ಅರುಣನೇತ್ರಕ್ಕೆ ಸಮಾನವಾಗಿವೆ.</verse>
				<verse number="19">ಅದರ ಬಾಯಿಯೊಳಗಿಂದ ಕೊಳ್ಳಿಗಳು ಹೊರಬರುತ್ತವೆ ಅದರಿಂದ ಬೆಂಕಿಕಿಡಿಗಳು ಹಾರಿಬರುತ್ತವೆ.</verse>
				<verse number="20">ಹುಲ್ಲುಹಾಕಿ ಕಾಸಿದ ಕೊಪ್ಪರಿಗೆಯಿಂದಲೋ ಎಂಬಂತೆ ಅದರ ಮೂಗಿನ ಹೊಳ್ಳೆಗಳಿಂದ ಹೊಗೆ ಹಾಯುತ್ತದೆ.</verse>
				<verse number="21">ಇದ್ದಿಲನು ಹೊತ್ತಿಸಲು ಅದರ ಉಸಿರೇ ಸಾಕು ಅದರ ಬಾಯಿಂದ ಹೊರಹೊಮ್ಮುವುದು ಜ್ವಾಲೆಯು.</verse>
				<verse number="22">ಅದರ ಬಲ ನೆಲೆಗೊಂಡಿದೆ ಕುತ್ತಿಗೆಯಲಿ ಭಯವು ತಾಂಡವಾಡುತ್ತದೆ ಅದರ ಮುಂಗಡೆಯಲಿ.</verse>
				<verse number="23">ಅಂಟಿಕೊಂಡಿದೆ ಅದರ ಮಾಂಸದ ಮಡಿಕೆಗಳು ಗಟ್ಟಿಯಾಗಿ ಅದರ ಮಾಂಸಖಂಡ ನಿಬಿಡವಾಗಿ.</verse>
				<verse number="24">ಅದರ ಹೃದಯ ಬಂಡೆಯಂತೆ ಅದರ ಗಟ್ಟಿ, ಬೀಸುವ ಕೆಳಗಲ್ಲಿನಂತೆ.</verse>
				<verse number="25">ಬಲಿಷ್ಠರೂ ಭಯಪಡುತ್ತಾರೆ ಅದು ಎದ್ದರೆ ಭಯಭ್ರಾಂತರಾಗಿ ತತ್ತರಿಸುತ್ತಾರೆ ಅದು ಬಡಿದರೆ.</verse>
				<verse number="26">ಕತ್ತಿಯಿಂದ ಹೊಡೆದರೆ ಅದಕ್ಕೇನೂ ಆಗದು ಭರ್ಜಿ, ಬಾಣ, ಈಟಿಗಳಿಂದ ಏನೂ ಆಗದು.</verse>
				<verse number="27">ಕಬ್ಬಿಣ ಅದಕ್ಕೆ ಒಣ ಹುಲ್ಲಿನಂತೆ ಕಂಚು ಅದಕ್ಕೆ ಟೊಳ್ಳುಮರದಂತೆ.</verse>
				<verse number="28">ಅದನು ಬಿಲ್ಲುಬಾಣಗಳಿಂದ ಓಡಿಸಲು ಅಸಾಧ್ಯ ಕಣಿವೆಯ ಕಲ್ಲು ಅದಕ್ಕೆ ಹೊಟ್ಟಿಗೆ ಸಮಾನ.</verse>
				<verse number="29">ದೊಣ್ಣೆಗಳು ಅದಕ್ಕೆ ಹುಲ್ಲುಕಡ್ಡಿಯ ಹಾಗೆ ಅದು ನಗುತ್ತದೆ ಸರ್ರನೆ ಬರುವ ಈಟಿಗೆ.</verse>
				<verse number="30">ಅದರ ಹೊಟ್ಟೆಯ ಅಡಿಭಾಗವು ಬೋಕಿಬಿಲ್ಲೆಗಳಂತೆ ಚೂಪು ಹಲಿವೆಯ ಹಾಗೆ ಕೆಸರಿನ ಮೇಲೆ ಮೈ ಚಾಚಿಕೊಂಡಿರುವುದು.</verse>
				<verse number="31">ಜಲನಿಧಿಯನು ಅದು ಕುದಿಸುತ್ತದೆ ಹಂಡೆಯ ನೀರಿನಂತೆ ಸಮುದ್ರವನು ಕಲಕಿಸುತ್ತದೆ ತೈಲದ ಕುಡಿಕೆಯಂತೆ.</verse>
				<verse number="32">ಸಾಗರಕ್ಕೆ ನೆರೆಬಂತೋ ಎಂಬ ಹಾಗೆ ಶುಭ್ರಗೊಳಿಸುತ್ತದೆ ತಾನು ಬಂದ ಹಾದಿಯನ್ನೇ.</verse>
				<verse number="33">ಜಗದಲ್ಲೆಲ್ಲೂ ಸಿಗದು ಇದಕ್ಕೆ ಸಾಟಿ ಭಯಭೀತಿಯಿಲ್ಲದ್ದು ಈ‍ ಸೃಷ್ಟಿ.</verse>
				<verse number="34">ದಿಟ್ಟಿಸಿ ನೋಡುತ್ತದೆ ಘನಪ್ರಾಣಿಗಳನ್ನೆಲ್ಲಾ ರಾಜನಾಗಿರುತ್ತದೆ ಸೊಕ್ಕಿನ ಮೃಗಗಳಿಗೆಲ್ಲಾ!</verse>
			</chapter>
			<chapter number="42">
				<verse number="1">ಆಗ ಯೋಬನು ಸರ್ವೇಶ್ವರಸ್ವಾಮಿಗೆ ಕೊಟ್ಟ ಉತ್ತರ ಇದು:</verse>
				<verse number="2">“ತಾವು ಎಲ್ಲಾ ಕಾರ್ಯಗಳನು ನಡೆಸಲು‍ ಶಕ್ತರೆಂದು ನಾನು ಬಲ್ಲೆ ಯಾವ ಯೋಜನೆಯು ನಿಮಗೆ ಅಸಾಧ್ಯವಿಲ್ಲವೆಂದು ನಾನು ಅರಿತಿರುವೆ.</verse>
				<verse number="3">‘ಅಜ್ಞಾನದ ಮಾತುಗಳನ್ನಾಡುವ ನೀನು ಯಾರು?’ ‘ಸತ್ಯಾಲೋಚನೆಗಳನು ಮಂಕುಮಾಡುವ ನೀನಾರು?’ ಈ ನಿಮ್ಮ ನುಡಿಯಂತೆ ಅರ್ಥಹೀನ ಮಾತುಗಳನು ನಾನಾಡಿದೆ ನನ್ನ ಬುದ್ಧಿಗೆಟುಕದ ಪವಾಡಗಳನ್ನು ಟೀಕಿಸಿದೆ.</verse>
				<verse number="4">‘ನಾನಾಡುವುದನು ಕಿವಿಗೊಟ್ಟು ಕೇಳು ನನ್ನ ಪ್ರಶ್ನೆಗೆ ಉತ್ತರ ನೀಡು’ ಎಂದು ನೀವು ಕೊಟ್ಟಿರಿ ಅಪ್ಪಣೆಯನು.</verse>
				<verse number="5">ಈವರೆಗೆ ನಿಮ್ಮನು ಕುರಿತು ನಾನು ಕೇಳಿದ್ದು ಬೇರೆಯವರಿಂದ ಈಗಲಾದರೊ ನಿಮ್ಮನು ಕಂಡಿದ್ದೇನೆ ನನ್ನ ಕಣ್ಣುಗಳಿಂದ.</verse>
				<verse number="6">ಆದುದರಿಂದ ನಾನು ಹೇಳಿದ್ದೆಲ್ಲಕ್ಕಾಗಿ ವಿಷಾದಿಸುತ್ತೇನೆ ಬೂದಿಯಲು, ಧೂಳಿನಲು ಕುಳಿತು ಪಶ್ಚಾತ್ತಾಪಪಡುತ್ತೇನೆ.”</verse>
				<verse number="7">ಸರ್ವೇಶ್ವರಸ್ವಾಮಿ ಈ ಮಾತುಗಳನ್ನು ಯೋಬನಿಗೆ ಹೇಳಿದ ಮೇಲೆ ತೇಮಾನ್ಯನಾದ ಎಲೀಫಜನಿಗೆ, “ನಿನ್ನ ಮೇಲೂ ನಿನ್ನ ಗೆಳೆಯರಿಬ್ಬರ ಮೇಲೂ ನನಗೆ ಕೋಪವಿದೆ! ನನ್ನ ದಾಸ ಯೋಬನಂತೆ ನೀವು ನನ್ನ ವಿಷಯವಾಗಿ ಸರಿಯಾದುದನ್ನು ಆಡಲಿಲ್ಲ.</verse>
				<verse number="8">ಆದುದರಿಂದ ನೀವು ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ದಾಸ ಯೋಬನ ಬಳಿಗೆ ಬನ್ನಿರಿ; ನಿಮ್ಮ ದೋಷಪರಿಹಾರಕ್ಕಾಗಿ ದಹನಬಲಿಯನ್ನು ಅರ್ಪಿಸಿರಿ. ನನ್ನ ದಾಸ ಯೋಬ ನಿಮ್ಮ ಪರವಾಗಿ ಪ್ರಾರ್ಥನೆ ಮಾಡುವನು; ನಾನು ಅವನ ವಿಜ್ಞಾಪನೆಯನ್ನು ಆಲಿಸಿ ನಿಮ್ಮ ನಿಮ್ಮ ಮೂರ್ಖತನಕ್ಕೆ ತಕ್ಕ ದಂಡನೆಯನ್ನು ವಿಧಿಸುವುದಿಲ್ಲ. ನನ್ನ ದಾಸ ಯೋಬನು ನನ್ನ ವಿಷಯದಲ್ಲಿ ಸತ್ಯವನ್ನು ನುಡಿದಂತೆ ನೀವು ನುಡಿಯಲಿಲ್ಲ,” ಎಂದರು.</verse>
				<verse number="9">ಆಗ ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು ಮತ್ತು ನಾಮಾಥ್ಯನಾದ ಚೋಫರನು ಹೋಗಿ ಸರ್ವೇಶ್ವರ ತಮಗೆ ಆಜ್ಞಾಪಿಸಿದಂತೆ ಮಾಡಿದರು. ಸರ್ವೇಶ್ವರ ಯೋಬನ ವಿಜ್ಞಾಪನೆಯನ್ನು ಆಲಿಸಿದರು.</verse>
				<verse number="10">ಯೋಬನು ತನ್ನ ಮಿತ್ರರಿಗೋಸ್ಕರ ಪ್ರಾರ್ಥಿಸಿದ ಬಳಿಕ ಸರ್ವೇಶ್ವರಸ್ವಾಮಿ ಅವನ ದುಸ್ಥಿತಿಯನ್ನು ಹೋಗಲಾಡಿಸಿದರು. ಅವನ ಆಸ್ತಿಪಾಸ್ತಿಯನ್ನು ಮೊದಲಿಗಿಂತ ಇಮ್ಮಡಿಯಾಗಿಸಿದರು.</verse>
				<verse number="11">ಅವನ ಎಲ್ಲಾ ಅಣ್ಣತಮ್ಮಂದಿರು, ಅಕ್ಕತಂಗಿಯರು, ಹಿಂದಿನ ಪರಿಚಿತರು ಅವನನ್ನು ಕಾಣಬಂದು ಔತಣದಲ್ಲಿ ಭಾಗವಹಿಸಿದರು. ಅವನಿಗೆ ಸರ್ವೇಶ್ವರನಿಂದ ಒದಗಿದ್ದ ಆಪತ್ತಿಗಾಗಿ ಅನುತಾಪ ವ್ಯಕ್ತಪಡಿಸಿ, ಸಂತೈಸಿದರು. ಪ್ರತಿಯೊಬ್ಬರೂ ಒಂದೊಂದು ಬೆಳ್ಳಿ ನಾಣ್ಯವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.</verse>
				<verse number="12">ಸರ್ವೇಶ್ವರ ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಅಧಿಕಗೊಳಿಸಿ ಆಶೀರ್ವದಿಸಿದರು.</verse>
				<verse number="13">ಅವನಿಗೆ ಹದಿನಾಲ್ಕು ಸಾವಿರ ಕುರಿಗಳು, ಆರು ಸಾವಿರ ಒಂಟೆಗಳು, ಒಂದು ಸಾವಿರ ಜೋಡಿ ಎತ್ತುಗಳು, ಒಂದು ಸಾವಿರ ಕತ್ತೆಗಳು ದೊರಕಿದವು.</verse>
				<verse number="14">ಅಲ್ಲದೆ ಏಳು ಮಂದಿ ಗಂಡುಮಕ್ಕಳು, ಮೂರು ಮಂದಿ ಹೆಣ್ಣುಮಕ್ಕಳು ಹುಟ್ಟಿದರು. ಮೊದಲನೆಯವಳಿಗೆ ಯೆಮೀಮ, ಎರಡನೆಯವಳಿಗೆ ಕೆಚೀಯ, ಮೂರನೆಯವಳಿಗೆ ಕೆರೆನ್ಹಪ್ಪೂಕ್ ಎಂದು ಹೆಸರಿಟ್ಟನು.</verse>
				<verse number="15">ಯೋಬನ ಮಕ್ಕಳಷ್ಟು ಸುಂದರವಾದ ಹೆಣ್ಣುಗಳು ಆ ನಾಡಿನಲ್ಲೆಲ್ಲೂ ಸಿಕ್ಕುತ್ತಿರಲಿಲ್ಲ. ಅವರ ತಂದೆ, ಅವರ ಅಣ್ಣತಮ್ಮಂದಿರಿಗೆ ಕೊಟ್ಟ ಹಾಗೆ ಅವರಿಗೂ ಸೊತ್ತನ್ನು ಹಂಚಿದನು.</verse>
				<verse number="16">ತರುವಾಯ ಯೋಬನು ನೂರನಾಲ್ವತ್ತು ವರ್ಷ ಬಾಳಿದನು. ನಾಲ್ಕು ತಲೆಮಾರು ತನಕ ಮಕ್ಕಳನ್ನೂ ಮೊಮ್ಮಕ್ಕಳನ್ನೂ ಕಂಡನು.</verse>
				<verse number="17">ಹಣ್ಣು ಹಣ್ಣು ಮುದುಕನಾಗಿ ಸತ್ತನು.</verse>
			</chapter>
		</book>
		<book number="19">
			<chapter number="1">
				<verse number="1">ದುರ್ಜನರ ಆಲೋಚನೆಯಂತೆ ನಡೆಯದೆ I ಪಾಪಾತ್ಮರ ಪಥದಲಿ ಕಾಲೂರದೆ I ಧರ್ಮನಿಂದಕರ ಕೂಟದಲಿ ಕೂರದೆ II</verse>
				<verse number="2">	ಪ್ರಭುವಿನ ಧರ್ಮಶಾಸ್ತ್ರದಲಿ ಹರ್ಷಗೊಳ್ಳುವವನಾರೋ - ಅವನೇ ಧನ್ಯನು I ಹಗಲಿರುಳೆನ್ನದೆ ಅದನೆ ಧ್ಯಾನಿಸುತಿರುವವನಾರೋ ಅವನೇ ಧನ್ಯನು II</verse>
				<verse number="3">ನದಿಯ ಬದಿಯಲೇ ಬೆಳೆದಿಹ ಮರದಂತೆ I ಸಕಾಲಕೆ ಫಲವೀವ ವೃಕ್ಷದಂತೆ I ಎಲೆಬಾಡದೆ ಪಸಿರಿರುವ ತರುವಂತೆ I ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II</verse>
				<verse number="4">ದುರುಳರಾದರೊ ತೂರಿ ಹೋಗುವರು I ಬಿರುಗಾಳಿಗೆ ತರಗೆಲೆಯಾಗುವರು II</verse>
				<verse number="5">ಎಂದೇ ನಿಲ್ಲಲಾರರು ದುರುಳರು ನ್ಯಾಯಸ್ಥಾನದಲಿ I ಸದಸ್ಯರಾಗರು ಪಾಪಿಗಳು ಸಜ್ಜನರ ಸಂಘದಲಿ II</verse>
				<verse number="6">ಸಜ್ಜನರ ಮಾರ್ಗಕ್ಕಿದೆ ಪ್ರಭುವಿನ ಪಾಲನ I ದುರ್ಜನರ ಮಾರ್ಗಕ್ಕಿದೆ ಸಂಪೂರ್ಣ ವಿನಾಶನ II</verse>
			</chapter>
			<chapter number="2">
				<verse number="1">ದೊಂಬಿಯೇಳುವುದೇತಕೆ ಅನ್ಯದೇಶವಿದೇಶಗಳು? I ಕುತಂತ್ರ ಹೂಡುವುದೇಕೆ ಅನ್ಯಜಾತಿಜನಾಂಗಗಳು? II</verse>
				<verse number="2">ದೇವನಿಗು, ಅವನಭಿಷಿಕ್ತನಿಗು ವಿರುದ್ಧವಾಗಿ I ನಿಂತಿಹರು ನೃಪರು ಸಮರ ಸನ್ನದ್ಧರಾಗಿ I ಸಮಾಲೋಚಿಸಿಹರು ಸಚಿವರು ರಹಸ್ಯವಾಗಿ II</verse>
				<verse number="3">“ಅವರೆಮಗೆ ತೊಡಿಸಿಹ ಬೇಡಿಗಳನು ಮುರಿಯೋಣ” ಎನ್ನುತಿಹರು I “ಅವರೆಮಗೆ ಹಾಕಿದ ಬಂಧನಗಳನು ಹರಿಯೋಣ” ಎನ್ನುತಿಹರು II</verse>
				<verse number="4">ಪರದಲಿ ಆಸೀನನಾಗಿಹ ಪ್ರಭು ನಗುವನಿದಕೆ I ಗುರಿಮಾಡದಿರನು ಇವರೆಲ್ಲರನು ಪರಿಹಾಸ್ಯಕೆ II</verse>
				<verse number="5">ಅನಂತರ ಸಿಡಿದೆದ್ದು ಹೀಗೆಂದು ನುಡಿವನು: “ನಾ ನೇಮಿಸಿದ ಅರಸನನೇ ಸ್ಥಾಪಿಸಿಹೆನು I ಸಿಯೋನ್ ಶ್ರೀಶಿಖರದಲೇ ಅವನನು ಇರಿಸಿಹೆನು” I ಈ ಪರಿ ಕೆರಳಿ ಕಳವಳಗೊಳಿಸುವನು ಅವರನು II</verse>
				<verse number="6"></verse>
				<verse number="7">ಕೇಳಿರೀ ದೈವಾಜ್ಞೆಯನು: ಆತನು ಎನಗಿಂತೆದನು: I “ಈ ದಿನ ನಾನಿನ್ನ ಹಡೆದಿಹೆನು: ನೀನೆನಗೆ ಮಗನು II</verse>
				<verse number="8">ಕೇಳಿದೆಯಾದರೆ ನಿನಗಧೀನಮಾಡುವೆನು ರಾಷ್ಟ್ರಗಳನು I ಕೊಡುವೆನು ನಿನಗೆ ಸ್ವಾಸ್ತ್ಯವಾಗಿ ಜಗದ ಆದ್ಯಂತವನು II</verse>
				<verse number="9">ನೀ ಬಡಿದು ಹಾಕುವೆ ಕಬ್ಬಿಣದ ಗದೆಯಿಂದವರನು I ನೀ ಒಡೆದು ಹಾಕುವೆ ಮಣ್ಣಿನ ಮಡಕೆಯಂತವರನು\II</verse>
				<verse number="10">ಎಂತಲೇ ವಿವೇಕಿಗಳಾಗಿರಿ, ರಾಜರುಗಳೇ, I ಬುದ್ಧಿವಾದಕೆ ಕಿವಿಗೊಡಿ, ದೇಶಾಧಿಪತಿಗಳೇ II</verse>
				<verse number="11">“ಭಯಭಕುತಿಯಿಂದ ಪ್ರಭುವಿಗೆ ಸೇವೆಮಾಡಿರಿ I ನಡುನಡುಗುತ ಆತನ ಪಾದಪೂಜೆ ಮಾಡಿರಿ” II</verse>
				<verse number="12">ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II</verse>
			</chapter>
			<chapter number="3">
				<verse number="1">ಪ್ರಭೂ, ನನಗೆ ವಿರೋಧಿಗಳು ಅನೇಕ I ನನಗೆದುರಾಗಿ ನಿಂತವರು ಅತ್ಯಧಿಕ II</verse>
				<verse number="2">“ಈತನಿಗೆ ದೇವರ ನೆರವೆನಿತು?” I ಇಂತಿದೆ ಹಲವರ ಕೆಣಕು ಮಾತು II</verse>
				<verse number="3">ನೀನಾದರೋ ಪ್ರಭು, ನನಗೆ ರಕ್ಷೆ, ವಿಜಯದಾತ I ನಾನು ತಲೆಯೆತ್ತಿ ನಡೆಯುವಂತೆ ಮಾಡುವಾತ II</verse>
				<verse number="4">ಸ್ವರವೆತ್ತಿ ಎನ್ನ ಪ್ರಭುವಿಗೆ ನಾ ಮೊರೆಯಿಡುವೆನು I ಸಿರಿಶಿಖರದಿಂದಾತನು ಸದುತ್ತರ ನೀಡುವನು II</verse>
				<verse number="5">ಹಾಯಾಗಿ ಮಲಗಿ ನಿದ್ರಿಸುವೆನು I ಸುಖಿಯಾಗಿ ಮರಳಿ ಎದ್ದೇಳುವೆನು I ಕಾಯ್ದು ಕಾಪಾಡುವನು ಪ್ರಭು ನನ್ನನು II</verse>
				<verse number="6">ಶತ್ರುಗಳು ಸಾವಿರಾರಿದ್ದರೂ ನಾನವರಿಗಂಜೆನು II ಸುತ್ತುವರಿದು ಸನ್ನದ್ಧರಾಗಿದ್ದರೂ ಭಯಪಡೆನು II</verse>
				<verse number="7">ಎದ್ದೇಳು ದೇವ, ಕಾಪಾಡ ಬಾ ಪ್ರಭುವೆ I ವೈರಿಗಳ ದವಡೆ ಬಡಿದವನು ನೀನಲ್ಲವೇ I ದುರುಳರ ಹಲ್ಲುದುರಿಸಿದವನು ನೀನಲ್ಲವೆ? II</verse>
				<verse number="8">ಜಯ ವಿಜಯ ಲಭಿಸುವುದು ಪ್ರಭುವಿನಿಂದಲೆ I ನಿನ್ನಾಶೀರ್ವಾದವಿರಲಿ, ಪ್ರಭು, ಪ್ರಜೆಯ ಮೇಲೆ II</verse>
			</chapter>
			<chapter number="4">
				<verse number="1">ಸತ್ಯಸ್ವರೂಪನಾದ ದೇವಾ, ಭಕ್ತನ ಮೊರೆಗೆ ಸದುತ್ತರ ಪಾಲಿಸೊ I ಆಪತ್ತಿನಲ್ಲಿ ಆಶ್ರಯವಿತ್ತ ದೇವಾ, ಎನ್ನ ಪ್ರಾರ್ಥನೆಯ ಆಲಿಸೊ II</verse>
				<verse number="2">ಎಲೆ ಮಾನವ, ಎಲ್ಲಿಯತನಕ ಕೆಡಿಸುವೆ ಎನ್ನ ಘನತೆಯ? I ಅದೆಷ್ಟು ಕಾಲ ಹುರುಳಿಲ್ಲದನು ಬಯಸಿ ಅರಸುವೆ ಹುಸಿಯ? II</verse>
				<verse number="3">ಭಕ್ತನನು ಪ್ರಭು ಪ್ರತ್ಯೇಕಿಸಿಕೊಂಡನೆಂದು ತಿಳಿದುಕೊ I ನಾ ಮೊರೆಯಿಟ್ಟಾಗ ಆತ ಕಿವಿಗೊಡುವನೆಂದು ಅರಿತುಕೊ II</verse>
				<verse number="4">ಕೋಪಗೊಂಡರೂ ದೂರವಿರು ಪಾಪದಿಂದ I ಶಯನದಲ್ಲಿದ್ದರೂ ಧ್ಯಾನಿಸು ಹೃದಯದಿಂದ II</verse>
				<verse number="5">ಅರ್ಪಿಸಿರಿ ಯೋಗ್ಯ ಬಲಿಗಳನೆ I ಇಡಿರಿ ಭರವಸೆ ಪ್ರಭುವಿನಲೆ II</verse>
				<verse number="6">“ಒಳಿತು ಮಾಳ್ಪರೆಲ್ಲಿ!” ಎಂದು ಕೇಳುತಿಹರು ಜನತೆ I ಬೆಳಗಿಸಲಿ ನಮ್ಮನು, ಓ ಪ್ರಭು, ನಿನ್ನ ಮೊಗದ ಘನತೆ II</verse>
				<verse number="7">ಧಾನ್ಯದ್ರಾಕ್ಷಿಗಳ ಸುಗ್ಗಿಸಂತಸಕ್ಕಿಂತಲು I ಮಿಗಿಲಾನಂದ ತುಂಬಿಸಿರುವೆ ನೀ ಎನ್ನೆದೆಯೊಳು II</verse>
				<verse number="8">ಮಲಗಿ ನಿದ್ರಿಸುವೆನು ನಾ ನಿಶ್ಚಿಂತನಾಗಿ I ಪ್ರಭು ನೀ ಕಾಯುವೆ ಎನ್ನ ಸುರಕ್ಷಿತನಾಗಿ II</verse>
			</chapter>
			<chapter number="5">
				<verse number="1">ಕಿವಿಗೊಡು ಪ್ರಭು, ಎನ್ನ ನುಡಿಗೆ I ಬಗೆಗೊಡು ಎನ್ನಾತ್ಮದ ಮೊರೆಗೆ II</verse>
				<verse number="2">ಎನ್ನರಸನೇ, ದೇವನೇ I ಮಾಡುವೆ ನಿನಗೆ ಪ್ರಾರ್ಥನೆ I ನೀ ಆಲಿಸೆನ್ನ ಯಾಚನೆ II</verse>
				<verse number="3">ಉದಯಕಾಲದಲ್ಲಿ ಪ್ರಭು, ನಿನಗೆ ಕೇಳಿಬರುವುದು ನನ್ನ ಸ್ವರ I ಉದಯಾರಾಧನೆ ಮಾಡಿ ಎದುರು ನೋಡುತ್ತಿರುವೆ ನಾ ಸದುತ್ತರ II</verse>
				<verse number="4">ದುಷ್ಟತನಕೆ ದೇವ, ನಿನಗಿಲ್ಲ ಒಲವು I ಕೆಟ್ಟತನಕೆ ನಿನ್ನ ಬಳಿಯಿಲ್ಲ ನಿಲುವು II</verse>
				<verse number="5">ನಿಲ್ಲಲಾರರು ನಿನ್ನ ಮುಂದೆ ಗರ್ವಿಗಳು I ನಿನಗೆ ವೈರಿಗಳಾಗುವರು ಅಧರ್ಮಿಗಳು II</verse>
				<verse number="6">ಹುಸಿ ನುಡಿವವರನು ಪ್ರಭು, ನೀ ನಾಶಮಾಡುವೆ I ಹಿಂಸಕರನು, ವಂಚಕರನು ನೀ ಹೇಸಿಬಿಡುವೆ II</verse>
				<verse number="7">ನಿನ್ನ ಮಂದಿರಕೆ ಬರುವೆ ನಿನ್ನಪಾರ ಪ್ರೀತಿಯ ನಿಮಿತ್ತ I ಭಕುತಿಯಿಂದ ಅಡ್ಡಬೀಳುವೆ ನಿನ್ನ ಪವಿತ್ರಾಲಯದತ್ತ II</verse>
				<verse number="8">ಶತ್ರುಗಳು ಮುತ್ತಿಹರು, ಸತ್ಯ ಪಥದಲಿ ನಡೆಸೆನ್ನನು I ನೇರಮಾಡೆನಗೆ ದೇವಾ, ನಿನ್ನ ಸಿರಿಮಾರ್ಗವನು II</verse>
				<verse number="9">ಅವರ ಬಾಯಲಿ ಹುಸಿನುಡಿ, ಹೃದಯವಾದರೊ ವಿನಾಶದ ಶರಧಿ I ಅವರ ಜಿಹ್ವೆಯಲಿ ಮುಖಸ್ತುತಿ, ಕಂಠವಾದರೋ ತೆರೆದ ಸಮಾಧಿ II</verse>
				<verse number="10">ಅವರಪರಾಧಿಗಳೆಂದು ಹೇ ದೇವಾ, ನಿರ್ಣಯಿಸಿಬಿಡು I ಅವರ ಮೋಸದ ಪಾಶದಲೇ ಅವರನು ಸಿಕ್ಕಿಸಿಬಿಡು I ಅವರನೇಕ ಪಾಪಗಳಿಗಾಗಿ ಅವರನು ದಬ್ಬಿಬಿಡು I ಅವರು ನಿನ್ನ ವಿರುದ್ಧ ದಂಗೆಯೆದ್ದವರು, ನೋಡು II</verse>
				<verse number="11">ದೊರಕುವುದು ದೇವಾ, ನಿನ್ನಾಶೀರ್ವಾದ ಸಜ್ಜನರಿಗೆ I ಕವಚವಾದಂತಿಹುದು ನಿನ್ನ ಕರುಣೆ ಅಂಥವರಿಗೆ II ಎಂದೇ ಹರ್ಷಾನಂದಗೊಳ್ವರು ನಿನ್ನನಾಶ್ರಯಿಸಿದವರೆಲ್ಲರು I ನೀ ರಕ್ಷಿಸೆ, ಉಲ್ಲಾಸಗೊಳ್ಳುವರು ನಿನ್ನ ನಾಮಪ್ರಿಯರೆಲ್ಲರು II</verse>
			</chapter>
			<chapter number="6">
				<verse number="1">ಖಂಡಿಸಬೇಡೆನ್ನ ಪ್ರಭು, ರೋಷದಿಂದ I ದಂಡಿಸಬೇಡೆನ್ನನು ಕಡುಕೋಪದಿಂದ II</verse>
				<verse number="2">ಕನಿಕರಿಸು ಹೇ ಪ್ರಭು, ನಾನು ಬಲಹೀನನು I ಗುಣಪಡಿಸು ಸಡಿಲವಾದ ಎನ್ನೆಲುಬುಗಳನು II</verse>
				<verse number="3">ಜೀವಾತ್ಮ ನಾ ಬಳಲಿ ತತ್ತರಿಸುತ್ತಿರುವೆ I ಎಲ್ಲಿಯತನಕ ಪ್ರಭು ನೀ ಕೈಬಿಟ್ಟಿರುವೇ II</verse>
				<verse number="4">ನನ್ನ ಕಡೆ ತಿರುಗಿ ಪ್ರಭು, ನನ್ನನುದ್ಧರಿಸು I ನಿನ್ನಚಲ ಪ್ರೀತಿಯಿಂದ ನನ್ನ ರಕ್ಷಿಸು II</verse>
				<verse number="5">ಸತ್ತವರಲಿ ನಿನ್ನ ಸ್ಮರಿಸುವವರಾರು? I ಪಾತಾಳದಲಿ ನಿನ್ನ ಸ್ತುತಿಸುವವರಾರು?II</verse>
				<verse number="6">ದಣಿದಿರುವೆ ನಾ ದುಃಖದಿಂದ ನರಳಿ ನರಳಿ I ತೊಯ್ದಿದೆ ಹಾಸಿಗೆ ಇರುಳಿರುಳ ಕಂಬನಿಯಲಿ I ತೇಲಿದೆ ಮಂಚ ಈ ಕಣ್ಣೀರ ಪ್ರವಾಹದಲಿ II</verse>
				<verse number="7">ಮಂಕಾದವು ಕಣ್ಣುಗಳು ರೋದನದಿಂದ I ಮಬ್ಬಾದವವು ವೈರಿಗಳ ಬಾಧೆಯಿಂದ II</verse>
				<verse number="8">ದುರ್ಜನರೇ ತೊಲಗಿರಿ ನನ್ನಿಂದ ದೂರ I ಪ್ರಭುವಿನ ಕಿವಿಮುಟ್ಟಿದೆ ನನ್ನಾರ್ತ ಸ್ವರ II</verse>
				<verse number="9">ಆಲಿಸಿಹನು ಪ್ರಭು ಎನ್ನ ಪ್ರಾರ್ಥನೆಯನು I ಅಂಗೀಕರಿಸಿಹನು ಎನ್ನಯ ವಿಜ್ಞಾಪನೆಯನು II</verse>
				<verse number="10">ತತ್ತರಿಸುವರು ಶತ್ರುಗಳೆಲ್ಲ ನಿರಾಶೆಯಿಂದ I ತಟ್ಟನೆ ಹಿಂಜರಿಯುವರವರೆಲ್ಲ ಅತಿ ಲಜ್ಜೆಯಿಂದ II</verse>
			</chapter>
			<chapter number="7">
				<verse number="1">ನಿನ್ನಾಶ್ರಯವನರಸಿ ಹೇ ಸ್ವಾಮಿ ದೇವಾ, ನಾ ಬಂದಿಹೆನು I ಬೆನ್ನಟ್ಟಿ ಬರುವವರ ಕೈಯಿಂದ ತಪ್ಪಿಸಿ, ಕಾಪಾಡೆನ್ನನು II</verse>
				<verse number="2">ಇಲ್ಲದಿರೆ ಶತ್ರು ತಿಳಿದಾನು ನನಗೆ ರಕ್ಷಕನಿಲ್ಲವೆಂದು I ಝಲ್ಲನೆ ಸೀಳಿಬಿಟ್ಟಾನು ಸಿಂಹದಂತೆ ಮೇಲೆಬಿದ್ದು II</verse>
				<verse number="3">ಸ್ವಾಮಿ ದೇವಾ, ನಾನೀಪರಿ ನಡೆದಿರೆ: ಅಕ್ರಮಕ್ಕೆ ಕೈ ಹಾಕಿರೆ I ಮಿತ್ರದ್ರೋಹಿ ಆಗಿರೆ, ನಿಷ್ಕಾರಣ ಶತ್ರು ಸುಲಿಗೆ ಮಾಡಿರೆ II</verse>
				<verse number="4"></verse>
				<verse number="5">ಎನ್ನ ಬೆನ್ನಟ್ಟಿ ಬರಲಿ ವೈರಿ, ಕಾಲಿಂದೆನ್ನ ಮೆಟ್ಟಿ ತುಳಿಯಲಿ I ಎನ್ನ ಮಾನವನು ಮಣ್ಣುಪಾಲಾಗಿಸಲಿ, ನನ್ನನು ಸೋಲಿಸಿಬಿಡಲಿ II</verse>
				<verse number="6">ಹೇ ಪ್ರಭು, ಎಚ್ಚರಗೊಳ್ಳು: ನ್ಯಾಯವನು ದೇವಾ, ನಿರ್ಣಯಿಸು I ಕೋಪದಿಂದೆದ್ದು ವಿರೋಧಿಗಳ ಕ್ರೋಧವನು ಭಂಗಪಡಿಸು II</verse>
				<verse number="7">ಸಭೆ ಸೇರಲಿ ಸಕಲ ಜನಾಂಗಗಳು ನಿನ್ನ ಸುತ್ತಲು I ನೀ ಆಸ್ಥಾನವನೇರು, ಅವರನು ಪರಿಪಾಲಿಸಲು II</verse>
				<verse number="8">ಹೇ ಪ್ರಭು, ಜಗದ ಜನಾಂಗಕೆ ನ್ಯಾಯ ದೊರಕಿಸುವವನು ನೀನು I ನನಗೂ ನ್ಯಾಯ ದೊರಕಿಸು: ನಿರಪರಾಧಿ, ನೀತಿವಂತ ನಾನು II</verse>
				<verse number="9">ಮಾನವರ ಹೃನ್ಮನವನರಿತಿಹ ಸತ್ಯಸ್ವರೂಪಿ ದೇವಾ, I ದುರುಳರ ಕೆಡುಕನಳಿಸಯ್ಯಾ, ಸತ್ಯವಂತರನು ನೀ ಉಳಿಸಯ್ಯಾ II</verse>
				<verse number="10">ನನಗೆ ರಕ್ಷೆ ನೀಡುವ ಗುರಾಣಿ, ದೇವನೇ I ನೇರಮನಸ್ಕರಿಗೆ ಸಂರಕ್ಷಣೆ ಆತನೆ II</verse>
				<verse number="11">ನ್ಯಾಯಕ್ಕನುಸಾರ ತೀರ್ಪನೀಡುವಂಥವನು ದೇವನು I ದುರುಳರ ಮೇಲೆ ದಿನಬಿಡದೆ ಕೋಪವುಳ್ಳವನು ಆತನು II</verse>
				<verse number="12">ತೀಡುವನು ಕತ್ತಿಯನು, ಹೂಡುವನು ಬಾಣವನು I ಪಡೆಯದಿರೆ ದುರುಳನು ಮನಪರಿವರ್ತನೆಯನು II</verse>
				<verse number="13">ಸೇರಿಸಿಟ್ಟಿರುವನಾತ ಮಾರಕಾಸ್ತ್ರಗಳನು I ಗುರಿಯಿಟ್ಟು ನಿಂತಿರುವನು ಅಗ್ನಿಬಾಣಗಳನು II</verse>
				<verse number="14">ಕೇಡನು ಹಡೆಯಲು ದುರುಳನು ಪಡುವ ಬೇನೆಯನು ನೋಡು I ಹಾನಿಯ ಹಡೆವನೆಂದೆಣಿಸಿ ಶೂನ್ಯವ ಹೆರುವುದ ನೋಡು II</verse>
				<verse number="15">ಗುಣಿಯನು ತೋಡಿದನು; ಮಣ್ಣನು ಹೊರದೂಡಿದನು I ತೋಡಿದ ಗುಣಿಯಲಿ ತಾನೆ ತಟ್ಟನೆ ಬೀಳುವನು II</verse>
				<verse number="16">ತಾನು ಮಾಡಿದ ಕುತಂತ್ರ ತನ್ನ ತಲೆಗೆ ಗಂಡಾಂತರ I ತಾನು ಕೊಟ್ಟ ಉಪದ್ರವ ತನ್ನ ಬುರುಡೆಗೆ ಅವಾಂತರ II</verse>
				<verse number="17">ಸತ್ಯಸ್ವರೂಪನಾದ ಸ್ವಾಮಿಗೆ ನನ್ನ ವಂದನೆ I ಪರಾತ್ಪರ ಪ್ರಭುವಿನ ನಾಮಕ್ಕೆ ಸ್ತುತಿಸಂಕೀರ್ತನೆ II</verse>
			</chapter>
			<chapter number="8">
				<verse number="1">ಪ್ರಭು, ಓ ನಮ್ಮ ಪ್ರಭು, ಎನಿತು ಮಹಿಮಾನ್ವಿತ I ಹರಡಿವೆ ನಿನ್ನ ಸಿರಿನಾಮ ಜಗದಾದ್ಯಂತ I ಬೆಳಗಿದೆ ನಿನ್ನ ವೈಭವ ಗಗನಾದ್ಯಂತ II</verse>
				<verse number="2">ವಿರೋಧಿಗಳ ಬಾಯನು ಮುಚ್ಚಿಸಿದೆ ಬಾಲ ಬಾಲೆಯರ ಬಾಯಿಂದಲೆ I ಹಗೆಗಳನು ದುರ್ಗದಂತೆ ತಡೆದೆ ಮೊಲೆಗೂಸುಗಳ ನಾಲಿಗೆಯಿಂದಲೆ II</verse>
				<verse number="3">ಆಕಾಶಮಂಡಲ ನಿನ್ನ ಕೈಕೆಲಸವಯ್ಯಾ I ಚಂದ್ರ ನಕ್ಷತ್ರಗಳು ನಿನ್ನ ರಚನೆಗಳಯ್ಯಾ II</verse>
				<verse number="4">ಇಂತಿರಲು, ಮನುಜನು ಎಷ್ಟರವನು ನೀನವನನು ಲಕ್ಷಿಸಲು? I ಏತರದವನು ನರಮಾನವನು ನೀನವನನು ಪರಾಮರಿಸಲು? II</verse>
				<verse number="5">ಆದರೆ ದೇವದೂತರಿಗಿಂತ ಕಿಂಚಿತ್ತೆ ಕೀಳಾಗಿಸಿದೆ ಮನುಜನನು I ಮುಡಿಸಿದೆ ಮುಕುಟವಾಗವನಿಗೆ ಘನಮಾನವನು, ಸಿರಿಹಿರಿಮೆಯನು II</verse>
				<verse number="6">ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ I ಒಳಪಡಿಸಿದೆ ಸಕಲವನು ಅವನ ಪಾದದಡಿಗೆ II</verse>
				<verse number="7">ಕುರಿಗಳನು, ಕರುಗಳನು, ಕಾಡುಮೃಗಗಳನು I ಗರಿಗಳನು, ಮೀನುಗಳನು, ಜಲಚರಗಳನು I ಕರಗತ ಮಾಡಿದೆ ನೀ ಅವನಿಗೆಲ್ಲವನು II</verse>
				<verse number="8"></verse>
				<verse number="9">ಪ್ರಭು, ಓ ಎಮ್ಮ ಪ್ರಭು, ನಿನ್ನ ನಾಮಾಮೃತ I ಬೆಳಗಿದೆ ತನ್ನ ಮಹಿಮೆಯನು ಭುವನ ಪರ್ಯಂತ II</verse>
			</chapter>
			<chapter number="9">
				<verse number="1">ಮನಃಪೂರ್ವಕವಾಗಿ ಪ್ರಭು, ನಿನ್ನ ಕೊಂಡಾಡುವೆನು I ನಿನ್ನದ್ಭುತಕಾರ್ಯಗಳೆಲ್ಲವನು ನಾ ವರ್ಣಿಸುವೆನು II</verse>
				<verse number="2">ಪರಾತ್ಪರನೇ, ಮಾಡುವೆನು ನಿನ್ನ ನಾಮಸ್ತುತಿ I ಹರ್ಷಾನಂದಗೊಳ್ವೆನು‍ ದೇವಾ, ನಿನ್ನಲ್ಲತಿ II</verse>
				<verse number="3">ನಿನ್ನ ಕಂಡು ನನ್ನ ವೈರಿಗಳು ಗೈದರು ಪಲಾಯನ I ಎದ್ದು ಬಿದ್ದು ಅವರೆಲ್ಲರೂ ಹೊಂದಿದರು ವಿನಾಶನ II</verse>
				<verse number="4">ನ್ಯಾಯಪೀಠದಲಿ ಕುಳಿತೆನ್ನ ವ್ಯಾಜ್ಯ ತೀರಿಸಿದೆ I ನೀತಿಗನುಸಾರವಾಗಿ ನ್ಯಾಯ ಸ್ಥಾಪಿಸಿದೆ II</verse>
				<verse number="5">ಭ್ರಷ್ಟರನು ದಂಡಿಸಿದೆ, ರಾಷ್ಟ್ರಗಳನು ಖಂಡಿಸಿದೆ I ಎಂದೆಂದೂ ಹೆಸರಿಲ್ಲದಂತೆ ಅವರನು ಅಳಿಸಿಹಾಕಿದೆ II</verse>
				<verse number="6">ನಿಶ್ಶೇಷವಾಗಿ ಹೋದರು ವಿರೋಧಿಗಳು I ನಾಶವಾಗಿ ಹೋದವು ಅವರ ನಗರಗಳು I ಇಲ್ಲವಾದವು ಅವರ ಯಾವ ನೆನಪುಗಳು II</verse>
				<verse number="7">ಪ್ರಭುವಿನ ರಾಜ್ಯಾಡಳಿತ ಶಾಶ್ವತ I ಆತನ ನ್ಯಾಯಪೀಠ ಸುಸ್ಥಾಪಿತ II</verse>
				<verse number="8">ಜಗಕೆ ನ್ಯಾಯ ತೀರಿಸುವನು ನೀತಿಗನುಸಾರ I ಜನಾಂಗಕೆ ತೀರ್ಪು ಕೊಡುವನು ಸತ್ಯಕ್ಕನುಸಾರ II</verse>
				<verse number="9">ದಲಿತರಿಗೆ ಪ್ರಭು ದುರ್ಗಸ್ಥಾನ I ಆಪತ್ತಿನಲ್ಲಿ ಆಶ್ರಯ ಸ್ಥಾನ II</verse>
				<verse number="10">ನಿನ್ನನು ಅರಸುವವರನು ಹೇ ಪ್ರಭು, ನೀ ಕೈ ಬಿಡುವವನಲ್ಲ I ನಿನ್ನಲ್ಲಿ ಭರವಸೆ ಇಡುವರು ನಿನ್ನ ನಾಮವನರಿತವರೆಲ್ಲ II</verse>
				<verse number="11">ಸಂಕೀರ್ತಿಸಿರಿ ಸಿಯೋನಿನಲಿ ವಾಸಿಸುವ ಪ್ರಭುವನು I ಪ್ರಕಟಿಸಿರಿ ಜನತೆಗೆ ಆತನ ಮಹತ್ಕಾರ್ಯಗಳನು II</verse>
				<verse number="12">ರಕ್ತಪಾತ ಲೆಕ್ಕಿಸಿ ಸೇಡು ತೀರಿಸುವಾತ I ದೀನದಲಿತರ ಮೊರೆಯನೆಂದಿಗು ಮರೆಯನಾತ II</verse>
				<verse number="13">ಮೃತ್ಯುವಿನ ಬಾಯಿಂದೆನ್ನ ಬದುಕಿಸುವ ಪ್ರಭು, ಕನಿಕರಿಸು I ವೈರಿ-ವಿರೋಧಿಗಳೆನಗೆ ಗೈದ ಕಿರುಕುಳವನು, ನೀ ಗಮನಿಸು II</verse>
				<verse number="14">ಆಗ ಸಿಯೋನ್ ನಗರಿಯ ದ್ವಾರದಲೆ ನಿಲ್ಲುವೆನು I ನಿನ್ನ ಗುಣಾತಿಶಯಗಳನು ಪ್ರಸಿದ್ಧಪಡಿಸುವೆನು I ನೀನಿತ್ತ ಮುಕ್ತಿಗಾಗಿ ಆನಂದಗೊಳ್ಳುವೆನು II</verse>
				<verse number="15">ಬಿದ್ದರು ಹೊರನಾಡಿಗರು ತಾವು ತೋಡಿದ ಗುಣಿಯಲೆ I ಸಿಕ್ಕಿಕೊಂಡಿತವರ ಕಾಲು ಅವರೊಡ್ಡಿದ ಬಲೆಯಲೆ II</verse>
				<verse number="16">ಪ್ರಭುವಿತ್ತ ನ್ಯಾಯತೀರ್ಪೇ ಆತನಿಗೆ ಪ್ರಚಾರಕ I ದುಷ್ಟರು ಗೈದ ಕುಯುಕ್ತಿಯೇ ಅವರಿಗೆ ಸಂಹಾರಕ II</verse>
				<verse number="17">ಕೆಳ ಪಾತಾಳವೊಂದೇ ಗತಿ ದುಷ್ಟರಿಗೆ I ದೇವರನು ಕೈಬಿಟ್ಟಾ ರಾಷ್ಟ್ರಗಳಿಗೆ II</verse>
				<verse number="18">ದರಿದ್ರರನು ದೇವರು ಎಂದಿಗು ಮರೆಯುವುದಿಲ್ಲ I ನಿರ್ಗತಿಕರ ನಿರೀಕ್ಷೆ ಕೈಗೂಡದೆ ಇರುವುದಿಲ್ಲ II</verse>
				<verse number="19">ಎದ್ದೇಳು ಪ್ರಭೂ, ಜಯ ದೊರಕದಿರಲಿ ನರಮಾನವನಿಗೆ I ನಡೆಯಲಿ ನಿನ್ನ ಮುಂದೆಯೆ ನ್ಯಾಯನಿರ್ಣಯ ಜನಾಂಗಗಳಿಗೆ II</verse>
				<verse number="20">ಮೂಡಿಸು ಹೇ ಪ್ರಭೂ, ಅವರಲಿ ಭಯಭ್ರಾಂತಿಯನು I ಕಲಿಸು ಜನಾಂಗಕೆ ತಾವು ಹುಲು ಮಾನವರೆಂಬುದನು II</verse>
			</chapter>
			<chapter number="10">
				<verse number="1">ನನ್ನಿಂದೇಕೆ ಪ್ರಭು, ಅಷ್ಟು ದೂರವಿರುವೆ? I ಕಷ್ಟಕಾಲದಲೇಕೆ ಕಣ್ಮರೆಯಾಗಿರುವೆ? II</verse>
				<verse number="2">ಸೊಕ್ಕಿನಿಂದ ಶೋಷಿಸುತಿಹರು ದಲಿತರನು ದುರುಳರು I ಸಿಕ್ಕಿಬೀಳಲಿ ತಾವೇ ಒಡ್ಡಿದ ಉರಿಲಿನೊಳವರು II</verse>
				<verse number="3">ಕೇಡಿಗನು ತನ್ನ ಮನದಾಸೆಗಾಗಿ ಹೆಮ್ಮೆಪಡುತಿಹನು I ಲಾಭಬಡುಕನು ಪ್ರಭುವನು ಶಪಿಸಿ ತಿರಸ್ಕರಿಸುತಿಹನು II</verse>
				<verse number="4">ಸೊಕ್ಕೇರಿದ ಮುಖದಾತನು ಪ್ರಭುವನು ಅರಸುವುದಿಲ್ಲ I ಅವನ ಮನದೊಳಿದೊಂದೇ ಭಾವನೆ: “ದೇವರೇ ಇಲ್ಲ\! II</verse>
				<verse number="5">ಗೆಲುವೆ ಅವನ ವ್ಯವಹಾರವೆಲ್ಲದರ ಸಾರ I ನಿನ್ನ ನಿರ್ಣಯ ಅವನ ಗ್ರಹಿಕೆಗೆ ಅತಿ ದೂರ II ಶತ್ರುಗಳನು ಕಂಡರೆ ಅವನಿಗೆ ತಾತ್ಸಾರ II</verse>
				<verse number="6">ನೆನೆವನು ಮನದೊಳು ದುರುಳನಿಂತು: I “ಯಾರಿಗೂ ನನ್ನ ಕದಲಿಸಲಾಗದು I ಬಾರದು ನನಗೆಂದಿಗು ಆಪತ್ತು” II</verse>
				<verse number="7">ತುಂಬಿದೆ ಶಾಪಕೋಪ, ಕುತಂತ್ರ ಅವನ ಬಾಯಲಿ I ಅವಿತಿದೆ ಪಾಪ, ಅತಿವಿನಾಶ ನಾಲಗೆಯಡಿಯಲಿ II</verse>
				<verse number="8">ಊರು ಸಂದುಗೊಂದುಗಳಲೆ ಅವಿತಿದ್ದು I ನಿರ್ಗತಿಕರಿಗಾಗಿ ಅಲ್ಲೆ ಕಾದಿದ್ದು I ಕೊಲೆಗೈವನು ಮರೆಯಲ್ಲೆ ಮೇಲೆಬಿದ್ದು II</verse>
				<verse number="9">ಹೊಂಚುಹಾಕುವನವನು ಗುಹೆಯೊಳಗಿನ ಸಿಂಹದಂತೆ I ಕಾಯ್ದು ಹಿಡಿದೆಳೆವನು ದಲಿತರನು ಬಲೆಗೆ ಬೀಳ್ವಂತೆ II</verse>
				<verse number="10">ಬಲಿಯಾಗಿಹನು ಬಲತ್ಕಾರಕೆ ಅಬಲನು I ಕುಸಿದು ಬಿದ್ದಿಹನು ಜಜ್ಜರಿತವಾಗವನು II</verse>
				<verse number="11">ಮನದೊಳಿಂತೆಂದು ನೆನೆದನಾ ದುರುಳನು: I “ದೇವನಿದನು ಮರೆತು ವಿಮುಖನಾಗಿಹನು I ಇನ್ನೆಂದಿಗು ನೋಡನು ಇದೆಲ್ಲವನು” II</verse>
				<verse number="12">ಎದ್ದೇಳು ಪ್ರಭು, ದಲಿತನನು ಮರೆಯದಿರಯ್ಯಾ I ಆತನನು ರಕ್ಷಿಸಲು ದೇವಾ, ಕೈಚಾಚಯ್ಯಾ II</verse>
				<verse number="13">ದುರುಳನು ನಿನ್ನನಲಕ್ಷ್ಯ ಮಾಡುವುದೆಂತು? I “ದೇವನೆನ್ನ ವಿಚಾರಿಸನು” ಎನ್ನುವುದೆಂತು? II</verse>
				<verse number="14">ಹೌದು ದೇವಾ, ನೀ ವಿಚಾರಿಪವನು; ದುಃಖದುಗುಡ ಲೆಕ್ಕಿಸುವವನು I ತಬ್ಬಲಿಗಳಿಗೆ ತಂದೆ ನೀನು, ನಿರ್ಗತಿಕ ನಿನಗೆ ಶರಣಾಗತನು II</verse>
				<verse number="15">ಧೂರ್ತನ, ದುರುಳನ ಭುಜಬಲವನು ನೀ ಮುರಿದುಬಿಡು I ಆತನ ನೀಚತನವನು ಪರೀಕ್ಷಿಸಿ ಶೂನ್ಯಮಾಡು II</verse>
				<verse number="16">ಪ್ರಭುವಿನ ಶ್ರೀಸಾಮ್ರಾಜ್ಯವು ಅನವರತ I ಆತನ ನಾಡಲಿ ಮುಗಿಯಿತು ಅನ್ಯಜನರ ಉಳಿತ II</verse>
				<verse number="17">ದೀನ ಕೋರಿಕೆಯನು ಪ್ರಭು, ತೀರಿಸುವೆ I ಹುರಿದುಂಬಿಸಿ, ಅವರ ಮೊರೆಗೆ ಕಿವಿಗೊಡುವೆ II</verse>
				<verse number="18">ದಲಿತರಿಗೆ, ದಿಕ್ಕಿಲ್ಲದವರಿಗೆ ನ್ಯಾಯವನು ದೊರಕಿಸುವೆ I ಈ ಪರಿ ಇಳೆಮಾನವರ ತುಳಿತದಿಂದ ಪಾರುಮಾಡುವೆ II</verse>
			</chapter>
			<chapter number="11">
				<verse number="1">ನಾನು ಆಶ್ರಯಿಸಿಕೊಂಡಿರಲು ಪ್ರಭುವನು I ನೀವು ಹೇಳುವುದೆಂತು ನನಗೀ ಮಾತನು: II</verse>
				<verse number="2">“ನೇರ ಮನಸ್ಕರನು ಕೊಲ್ಲಲು ಇರುಳೊಳು I ಬಿಲ್ಲು ಬಗ್ಗಿಸಿಹರಿದೋ ಆ ದುರುಳರು I ಎದೆಗೆ ಬಾಣವನು ಹೂಡಿ ನಿಂತಿರುವರು” II “ಓಡಿರಿ, ಪಕ್ಷಿಪಾರಿವಾಳಗಳಂತೆ ಗಿರಿಶಿಖರಗಳಿಗೆ I ಅಸ್ತಿವಾರವೆ ಕಿತ್ತಿರಲು, ಗತಿಯೆನಿತು ಸತ್ಯವಂತರಿಗೆ?” II</verse>
				<verse number="3"></verse>
				<verse number="4">ಪ್ರಭು ಪ್ರಸನ್ನವಿರುವನು ಪವಿತ್ರಾಲಯದಲಿ I ಸ್ಥಾಪಿಸಿಹನು ಸಿಂಹಾಸನವನು ಪರದಲಿ I ನರಮಾನವರನು ನೋಡುತಿಹನು ನೇತ್ರಗಳಲಿ I ಪರೀಕ್ಷಿಸುತಿಹನು ಅವರನು ಸೂಕ್ಷ್ಮರೀತಿಯಲಿ II</verse>
				<verse number="5">ಪರೀಕ್ಷಿಸುವನು ಪ್ರಭು ಸಜ್ಜನ ದುರ್ಜನರನು I ದ್ವೇಷಿಸುವನು ಮನಸಾರೆ ಹಿಂಸಾತ್ಮಕರನು II</verse>
				<verse number="6">ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II</verse>
				<verse number="7">ಸತ್ಯಸ್ವರೂಪನಾದ ಪ್ರಭು ಸತ್ಯ ಪ್ರಿಯನು I ಸತ್ಪುರುಷನು ಸೇರುವನು ಆತನ ಸನ್ನಿಧಿಯನು II</verse>
			</chapter>
			<chapter number="12">
				<verse number="1">ನೆರವಾಗು ಪ್ರಭು, ಭಕ್ತರಿಲ್ಲವಾದರು ಜಗದೊಳು I ಶರಣರಾರೂ ಕಾಣಸಿಗರೆನಗೆ ನರಮಾನವರೊಳು II</verse>
				<verse number="2">ಹುಸಿಯ ನುಡಿವರು ನೆರೆಯವರೊಡನೆ ಪ್ರತಿಯೋರ್ವರು I ಕಪಟ ಮನದ ತುಟಿಮಾತಿನ ಸ್ತುತಿಗಾರರವರು II</verse>
				<verse number="3">ಕಪಟವಾಡುವ ತುಟಿಗಳನು ಪ್ರಭು ಕಡಿದುಬಿಡಲಿ I ಬಡಾಯಿಕೊಚ್ಚುವ ಜಿಹ್ವೆಯನು ಕತ್ತರಿಸಿಬಿಡಲಿ II</verse>
				<verse number="4">“ನಮ್ಮ ತುಟಿಗೆ ಹತೋಟಿ ಬೇಕಿಲ್ಲ; ನಾಲಗೆಯೇ ಗೆಲುವಿನ ಮೂಲ I ನಮಗೊಡೆಯನ ಅವಶ್ಯವಿಲ್ಲ” ಎಂದವರಾಡುವುದು ಸಲ್ಲ II</verse>
				<verse number="5">ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II</verse>
				<verse number="6">ಪ್ರಭುವಿನ ಈ ವಾಗ್ದಾನ ಪ್ರಮಾಣಬದ್ಧ I ಏಳ್ಮಡಿ ಪುಟಕ್ಕಿಟ್ಟ ಬೆಳ್ಳಿಯಷ್ಟು ಶುದ್ಧ II</verse>
				<verse number="7">ಅಲೆದಾಡುತಿಹರು ದುರುಳ ದ್ರೋಹಿಗಳು ಎಲ್ಲೆಡೆ I ದುಷ್ಟರಿಗಿದೆ ಮಾನವರ ನಡುವೆ ಪ್ರತಿಷ್ಟೆ II ನಮ್ಮನಿವರ ಕೈಯಿಂದ ತಪ್ಪಿಸಿ ಕಾಪಾಡು I ಹೇ ಪ್ರಭು, ನಮ್ಮನು ಸದಾ ಸುರಕ್ಷಿತವಾಗಿಡು II</verse>
			</chapter>
			<chapter number="13">
				<verse number="1">ಎಷ್ಟುಕಾಲ ಪ್ರಭು, ನೀ ಎನ್ನ ಪೂರ್ತಿ ಮರೆತಿರುವೆ? I ಇನ್ನೆಷ್ಟರ ತನಕ ನೀನೆನಗೆ ವಿಮುಖನಾಗಿರುವೆ? II</verse>
				<verse number="2">ಎನಿತುಕಾಲ ನಾ ಚಿಂತೆಯಿಂದಿರಬೇಕು? I ದಿನವೆಲ್ಲಾ ಮನದಲ್ಲಿ ನೊಂದಿರಬೇಕು? I ನನ್ನ ಮೇಲೆ ವೈರಿ ದೊರೆತನ ಮಾಡಬೇಕು? II</verse>
				<verse number="3">ಹೇ ಪ್ರಭು, ಹೇ ದೇವ, ಎನ್ನ ವೀಕ್ಷಿಸಿ ಸದುತ್ತರ ಪಾಲಿಸು I ಮರಣ ನಿದ್ರೆ ಬಾರದಂತೆ ನನ್ನ ನೇತ್ರಗಳನು ಬೆಳಗಿಸು II</verse>
				<verse number="4">ತಾನು ಜಯಗಳಿಸಿದೆನೆಂದು ಶತ್ರು ಹೇಳಿಕೊಳ್ಳದಿರಲಿ I ನಾನು ಜಾರಿ ಬಿದ್ದೆನೆಂದು ವೈರಿ ಹಿರಿಹಿಗ್ಗದಿರಲಿ II</verse>
				<verse number="5">ನಿನ್ನಚಲ ಪ್ರೀತಿಯಲ್ಲಿದೆ ನನಗಿದೆ ವಿಶ್ವಾಸ I ನಿನ್ನ ರಕ್ಷಣೆ ತಂದಿದೆ ನನ್ನ ಮನಕೆ ಹರುಷ II</verse>
				<verse number="6">ಪ್ರಭು ಮಾಡಿದ ಮಹೋಪಕಾರಗಳಿಗಾಗಿ I ಹಾಡುವೆ ಗೀತವನು ಮನಃಪೂರ್ವಕವಾಗಿ II</verse>
			</chapter>
			<chapter number="14">
				<verse number="1">“ದೇವನಿಲ್ಲ” ಎನ್ನುವವರು ಮನದಲಿ ದುರ್ಮತಿಗಳು I ಹೇಯ ಕೃತ್ಯವೆಸಗುವರು ಆ ಭ್ರಷ್ಟಚಾರಿಗಳು I ಒಳಿತನ್ನು ಮಾಡುವರಾರೂ ಇಲ್ಲ ಅವರೊಳು II</verse>
				<verse number="2">ಮಾನವರನು ಪ್ರಭು ಸ್ವರ್ಗದಿಂದ ಸಮೀಕ್ಷಿಸುತಿಹನು I ದೇವರನು ಅರಸುವ ಸನ್ಮತಿಗಳಾರೆಂದು ವೀಕ್ಷಿಸುತಿಹನು II</verse>
				<verse number="3">ದಾರಿತಪ್ಪಿಹೋದ ದ್ರೋಹಿಗಳು ಅವರೆಲ್ಲ I ಒಳಿತನ್ನು ಮಾಡುವವನಿಲ್ಲ; ಓರ್ವನೂ ಇಲ್ಲ II</verse>
				<verse number="4">ದುರ್ಜನರೆನ್ನ ಜನರನು ಅನ್ನದಂತೆ ನುಂಗುವುದೇಕೆ? I ಪ್ರಭುವನು ನೆನೆಯದಾ ದುಷ್ಕರ್ಮಿಗಳಿಗೆ ಅರಿವಿಲ್ಲವೇಕೆ? I</verse>
				<verse number="5">ಸಜ್ಜನರ ಸಂಗದೊಳು ದೇವನಿರಲು I ದುರ್ಜನರಿದೋ ದಿಗ್ಭ್ರಾಂತರಾಗುವರು II</verse>
				<verse number="6">ಕೆಡಿಸಬಹುದವರು ಬಡಜನರ ಯೋಜನೆಯನು I ಪ್ರಭುವಾದರೊ ಅವರಿಗೆ ಆಶ್ರಯವಾಗಿರುವನು II</verse>
				<verse number="7">ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ I ತರಲಿ ಪ್ರಭು ತನ್ನ ಪ್ರಜೆಗೆ ಮರಳಿ ಸಿರಿಸಂಪತ್ತ I ಸಿಗಲಿ ಯಕೋಬ - ಇಸ್ರಯೇಲ ಜನತೆಗೆ ಹರ್ಷಾನಂದ II</verse>
			</chapter>
			<chapter number="15">
				<verse number="1">ಯೋಗ್ಯನಾರು ಪ್ರಭು ನಿನ್ನ ಗುಡಾರದಲಿ ಬಿಡಾರಮಾಡಲು? I ಅರ್ಹನಾರು ನಿನ್ನ ಪವಿತ್ರ ಶಿಖರದಲಿ ವಾಸವಾಗಿರಲು? II</verse>
				<verse number="2">ಅಂಥವನಿರಬೇಕು ನಿರ್ದೋಷಿ, ಸನ್ಮಾರ್ಗಿ I ಸತ್ಯವ ನುಡಿಯಬೇಕು ಹೃತ್ಪೂರ್ವಕವಾಗಿ II</verse>
				<verse number="3">ಚಾಡಿಯನು ಹೇಳನು, ಕೇಡನು ಮಾಡನನ್ಯರಿಗೆ I ಗುರಿಮಾಡನವನು ನೆರೆಹೊರೆಯವರನು ನಿಂದೆಗೆ II</verse>
				<verse number="4">ಭ್ರಷ್ಟರನು ಧಿಕ್ಕರಿಸುವನು, ಭಕ್ತರನು ಗೌರವಿಸುವನು I ನಷ್ಟವಾದರೂ ಕೊಟ್ಟ ಮಾತನು ತಪ್ಪನವನು II</verse>
				<verse number="5">ಕೊಡುವನು ಕಡವನು, ಬಯಸನು ಬಡ್ಡಿಯನು I ಎಡವರ ಕೇಡಿಗೆ ಪಡೆಯನು ಲಂಚವನು I ಕದಲನೆಂದಿಗೂ ಈಪರಿ ನಡೆವವನು II</verse>
			</chapter>
			<chapter number="16">
				<verse number="1">ನೀಡು ದೇವಾ ರಕ್ಷಣೆಯನು I ನಾ ನಿನಗೆ ಶರಣಾಗತನು II</verse>
				<verse number="2">“ನೀನೇ ನನ್ನೊಡೆಯ\ನೆಂದು ನಾ ನುಡಿದೆ I ನಿನ್ನ ಹೊರತು ನನಗಿಲ್ಲ ಒಳಿತು” ಎಂದೇ II</verse>
				<verse number="3">ಸಂತರು ನಾಡಿಗೆ ತಿಲಕವು I ಅವರಲ್ಲಿದೆ ಎನಗೆ ಒಲವು II</verse>
				<verse number="4">ಅನ್ಯದೇವರನ್ನು ಬಯಸುವವರನ್ನು ಕಾದಿದೆ ಕಠಿಣ ಕಷ್ಟ I ಅವರಂತೆ ರಕ್ತಪಾನತರ್ಪಣೆ ಮಾಡಲೆನಗಿಲ್ಲ ಇಷ್ಟ I ಆ ದೇವರುಗಳ ನಾಮೋಚ್ಚಾರಣೆ ನನ್ನ ತುಟಿಗೆ ಅನಿಷ್ಟ II</verse>
				<verse number="5">ನನ್ನ ಸ್ವತ್ತೂ ಸ್ವಾಸ್ತ್ಯವೂ ನೀನೇ I ನಿನ್ನ ಕೈಯಲ್ಲಿದೆ ಪ್ರಭು, ನನ್ನ ವಿಮೆ II</verse>
				<verse number="6">ನನ್ನ ಪಾಲಿಗೆ ಬಂದುದು ರಮಣೀಯವಾದುದು I ನನಗದೆ ಪರಮಾನಂದದಾಯಕವಾದುದು II</verse>
				<verse number="7">ಪ್ರಭುವಿಗೆನ್ನ ಧನ್ಯವಾದ - ಆತನೇ ನನಗೆ ಮಾರ್ಗದರ್ಶಕ I ಅಂಧಕಾರದೊಳೂ ನನ್ನ ಮನಸ್ಸಾಕ್ಷಿಯೆ ನನಗೆ ಬೋಧಕ II</verse>
				<verse number="8">ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ I ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ II</verse>
				<verse number="9">ಇದು ಕಾರಣ ಹರ್ಷದಿಂದಿದೆ ಎನ್ನಯ ಹೃದಯ I ಆನಂದಗೊಂಡಿದೆ ಮನ, ಸುರಕ್ಷಿತವಿದೆ ಕಾಯ II</verse>
				<verse number="10">ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ I ಬಿಟ್ಟುಕೊಡುವುದಿಲ್ಲ ನಿನ್ನ ಆ ಭಕ್ತನನು ಪಾತಾಳಕೆ II</verse>
				<verse number="11">ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II</verse>
			</chapter>
			<chapter number="17">
				<verse number="1">ಲಕ್ಷ್ಯವಿಡು, ಓ ಪ್ರಭು, ಎನ್ನ ನ್ಯಾಯವಾದ ಮೊರೆಗೆ I ಕಿವಿಗೊಡು, ನಿಷ್ಕಪಟ ಬಾಯಿಂದ ಬಂದ ಪ್ರಾರ್ಥನೆಗೆ II</verse>
				<verse number="2">ನ್ಯಾಯತೀರ್ಪು ಬರಲಿ ಎನಗೆ, ನಿನ್ನಿಂದಲೆ I ನೀತಿಗನುಸಾರ ನೋಡುವಾತ, ನೀನಲ್ಲವೆ? II</verse>
				<verse number="3">ಹೃದಯ ವೀಕ್ಷಿಸು, ಇರುಳೆಲ್ಲ ವಿಚಾರಿಸು, ಅಗ್ನಿಪರೀಕ್ಷೆ ಮಾಡಿಸು I ನಾ ದೋಷರಹಿತ, ಮಾತಲಿ ತಪ್ಪದವ, ಎಂದಾಗ ತೀರ್ಮಾನಿಸು II</verse>
				<verse number="4">ಲೋಕವಿಚಾರಗಳಲಿ ಹಿಂಸಾತ್ಮಕ ಮಾರ್ಗ ಹಿಡಿದಿಲ್ಲ I ನಿನ್ನಧರ ವಚನವನು ನಾನೆಂದಿಗು ಮೀರಿ ನಡೆದಿಲ್ಲ II</verse>
				<verse number="5">ನಿನ್ನ ಮಾರ್ಗದಿಂದ ಕಾಲು ಜಾರಲು ಬಿಡದೆ I ನಿನ್ನ ಪಥದಲಿ ದಿಟ್ಟ ಹೆಜ್ಜೆಯಿಟ್ಟು ನಡೆದೆ II</verse>
				<verse number="6">ಸದುತ್ತರ ಪಾಲಿಪೆಯೆಂದು ನಂಬಿ ಬೇಡುವೆನಯ್ಯಾ I ಮೊರೆಯಿಡುವೆ ದೇವಾ, ಕಿವಿಗೊಟ್ಟು ಆಲಿಸಯ್ಯಾ II</verse>
				<verse number="7">ಶರಣರನು ಶತ್ರುವಿಂದ ಸಂರಕ್ಷಿಸುವಾತ ನೀನಯ್ಯಾ I ಭುಜಬಲವನು ಪ್ರಯೋಗಿಸಿ ಕಾಪಾಡುವಾತ ನೀನಯ್ಯಾ I ನಿನ್ನಚಲ ಪ್ರೀತಿಯನ್ನಚ್ಚರಿಯಿಂದ ತೋರ್ಪಡಿಸಯ್ಯಾ II</verse>
				<verse number="8">ಮುತ್ತಿಗೆ ಹಾಕಿರುವ ಹೀನ ಶತ್ರುಗಳಿಂದ I ಸುತ್ತುವರೆದಿರುವ ಪ್ರಾಣ ವೈರಿಗಳಿಂದ I ನಿನ್ನ ಕನೀನಿಕೆಯಂತೆ ಎನ್ನ ಕಾಪಾಡು I ನಿನ್ನ ರೆಕ್ಕೆಗಳ ನೆರಳಲಿ ಎನ್ನ ಮರೆಸಿಡು II</verse>
				<verse number="9"></verse>
				<verse number="10">ಕರುಣೆಗೆಡೆಯಿಲ್ಲ ಕೊಬ್ಬಿದಾ ಹೃದಯಗಳಲಿ I ಗರ್ವ ತುಳುಕುತಿದೆ ಆ ಜನರ ಬಾಯಿಗಳಲಿ II</verse>
				<verse number="11">ಹಿಂದೆಯೆ ಬಂದು ಸುತ್ತುವರೆದುಕೊಳ್ಳುವರು I ನೆಲಕ್ಕಪ್ಪಳಿಸಲು ಹೊಂಚು ಕಾಯುತ್ತಿರುವರು II</verse>
				<verse number="12">ಇಹರು ಸೀಳಿಹಾಕಲಿರುವ ಕೇಸರಿಯಂತೆ I ಹೊಂಚು ಹಾಕುತಿಹರು ಪ್ರಾಯ ಸಿಂಹದಂತೆ II</verse>
				<verse number="13">ಸದೆಬಡಿ ಪ್ರಭು, ಆ ದುರುಳರನು ಇದಿರ್ಗೊಂಡು I ಖಡ್ಗ ಹಿಡಿದೆನ್ನ ಪ್ರಾಣವನು ಕಾಪಾಡು II</verse>
				<verse number="14">ಇಳೆಯ ಮಾನವರಿಂದ ಪ್ರಭು, ಎನ್ನನು ಕೈಯಾರೆ ಕಾಪಾಡು I ಜಗವೇ ತಮ್ಮ ಪಾಲಿನ ಪರಿಮಿತಿ ಎನ್ನುವವರಿಂದ ಕಾದಿಡು II ಅವರಾದರೊ ನಿನ್ನ ನಿಧಿಯಿಂದ ಉದರ ತುಂಬಿಸಿಕೊಳ್ಳಲಿ I ಮಕ್ಕಳು, ಮರಿಮಕ್ಕಳಿಗೆ ಯಥೇಚ್ಛವಾಗಿ ಉಳಿಸಿಕೊಳ್ಳಲಿ II</verse>
				<verse number="15">ಸತ್ಯಸಂಧನಾದ ನಾನೊ ಸೇರುವೆ ನಿನ್ನ ಸಾನ್ನಿಧ್ಯವನು I ಎಚ್ಚೆತ್ತು ನಿನ್ನ ಮುಖದರ್ಶನದಿಂದ ತೃಪ್ತನಾಗುವೆನು II</verse>
			</chapter>
			<chapter number="18">
				<verse number="1">ಪ್ರಭುವೇ, ನೀನೆ ನನ್ನ ಬಲವು I ನನಗಿದೆ ನಿನ್ನಲೇ ಒಲವು II</verse>
				<verse number="2">ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II</verse>
				<verse number="3">ಪ್ರಭು ಸ್ತುತ್ಯಾರ್ಹನು I ಶತ್ರುಗಳಿಂದ ಕಾಪಾಡುವನು, ನಾನವಗೆ ಮೊರೆಯಿಡಲು II</verse>
				<verse number="4">ನನಗೆ ಸುತ್ತಿಕೊಂಡವು ಮೃತ್ಯುಪಾಶಗಳು I ನಡುಕ ಹುಟ್ಟಿಸಿದ್ದವು ವಿನಾಶಪ್ರವಾಹಗಳು II</verse>
				<verse number="5">ಆವರಿಸಿಕೊಂಡವು ಪಾತಾಳ ಪಾಶಗಳು I ನನ್ನ ಕಣ್ಮುಂದಿದ್ದವು ಮರಣಕರ ಉರುಲುಗಳು II</verse>
				<verse number="6">ಇಂಥಾ ದುಸ್ಥಿತಿಯಲಿ ನಾ ಮೊರೆಯಿಟ್ಟೆ ಪ್ರಭುವಿಗೆ I ಪ್ರಾರ್ಥನೆ ಮಾಡಿದೆ ಆ ನನ್ನ ದೇವನಲಿ I ನನ್ನ ಪ್ರಾರ್ಥನೆ ಬಿದ್ದಿತು ಆತನ ಕಿವಿಯಲಿ II</verse>
				<verse number="7">ಆಗ ಕಂಪಿಸಿತು ಭೂಮಿ ಗಡಗಡನೆ I ಕದಲಿದವು ಬೆಟ್ಟದ ಬುಡಗಳು ಮಿಲಮಿಲನೆ I ಏಕೆನೆ, ಸಿಟ್ಟೇರಿತ್ತು ಆತನಿಗೆ II</verse>
				<verse number="8">ಹೊರಬಂದಿತು ಹೊಗೆ ಆತನ ಮೂಗಿಂದ I ಹೊರಟಿತು ಅಗ್ನಿಜ್ವಾಲೆ ಆತನ ಬಾಯಿಂದ I ಕಾದುಕೆಂಡವಾಗಿಸಿತದು ಎದುರಿಗೆ ಸಿಕ್ಕಿದ್ದನೆಲ್ಲ II</verse>
				<verse number="9">ಆಕಾಶವನೆ ಬಾಗಿಸಿ ಆತನಿಳಿದು ಬರಲು I ಸೇರಿತು ಆತನ ಕಾಲಡಿ ಕಾರ್ಮುಗಿಲು II</verse>
				<verse number="10">ಬಂದಿಳಿದನು ‘ಕೆರೂಬಿ’ ವಾಹನಾರೂಢನಾಗಿ I ಇಳಿದು ಬಂದನು ವಾಯುರೆಕ್ಕೆಗಳ ವೇಗದಲಿ II</verse>
				<verse number="11">ಕತ್ತಲನು ಕವಿಸಿಕೊಂಡನು ಸುತ್ತಲು ಛತ್ರಾಂಬರದೊಳು I ಮರೆಯಾದನು ಜಲಮಯ ನೀಲಮೇಘಗಳ ಮಧ್ಯದೊಳು II</verse>
				<verse number="12">ಹೊಳೆಯಿತು ಮಿಂಚು ಆತನ ತೇಜದ ಸನ್ನಿಧಿಯಿಂದ I ಸುರಿಯಿತು ಕಲ್ಮಳೆ, ಉರಿಗೆಂಡ ಕಾರ್ಮೋಡಗಳಿಂದ II</verse>
				<verse number="13">ಗುಡುಗಿದನು ಸರ್ವೇಶ್ವರ ಗಗನಮಂಡಲದಿಂದ I ಮೊಳಗಿತು ವಾಣಿ ಆ ಪರಾತ್ಪರನ ವದನದಿಂದ I ಸುರಿಯಿತಿದೋ ಕಲ್ಮಳೆ, ಉರಿಗೆಂಡ ಮೇಲಿಂದ II</verse>
				<verse number="14">ಚದರಿಸಿದನು ಶತ್ರುಗಳನು ಬಾಣಗಳನ್ನೆಸೆದು I ತಳಮಳಗೊಳಿಸಿದನವರನು ಸಿಡಿಲನು ಹೊಡೆದು II</verse>
				<verse number="15">ಪ್ರಭು, ನಿನ್ನ ಗದರಿಕೆಯಿಂದ, ನಿನ್ನಾ ಶ್ವಾಸಭರದಿಂದ I ಕಾಣಿಸಿಕೊಂಡಿತು ಇಂಗಿಹೋದ ಸಮುದ್ರದ ತಳ I ತೋರಿಬಂದಿತು ಭೂಲೋಕದ ಅಸ್ತಿಭಾರ II</verse>
				<verse number="16">ಮೇಲಣಲೋಕದಿಂದ ಹಿಡಿದುಕೊಂಡನು ಕೈಚಾಚಿ I ಸೆಳೆದುಕೊಂಡ ಆ ಜಲರಾಶಿಗಳಿಂದೆನ್ನನು ಕೈನೀಡಿ II</verse>
				<verse number="17">ಬಿಡಿಸಿ ರಕ್ಷಿಸಿದನೆನ್ನಾ ಶತ್ರುಗಳಿಂದ I ನನಗಿಂತ ಪುಷ್ಟ, ಬಲಿಷ್ಟ ಹಗೆಗಳಿಂದ II</verse>
				<verse number="18">ನನ್ನ ಮೇಲೆರಗಿದ್ದರೂ ಹಗೆಗಳು ದುರಂತಕಾಲದಲಿ I ನನಗುದ್ಧಾರಕನಾದ ಪ್ರಭು, ಆ ವಿಪತ್ಕಾಲದಲಿ II</verse>
				<verse number="19">ಬಿಕ್ಕಟ್ಟಿನಿಂದ ಬಿಡಿಸಿ ತಂದನು ಬಯಲಿಗೆ I ಅಕ್ಕರೆಯಿಂದ ಮೆಚ್ಚಿ ರಕ್ಷಕನಾದ ನನಗೆ II</verse>
				<verse number="20">ನನಗೊಳಿತು ಮಾಡಿದನಾತ ಸನ್ನಡತೆಗೆ ತಕ್ಕಂತೆ I ಪ್ರತಿಫಲವನಿತ್ತನು ನನ್ನ ಹಸ್ತಶುದ್ಧತೆಗೆ ತಕ್ಕಹಾಗೆ II</verse>
				<verse number="21">ದೇವರನು ತೊರೆದು ದುರುಳನಾಗದೆ I ನಾನನುಸರಿಸಿದೆ ಪ್ರಭುವಿನ ಮಾರ್ಗವನೆ II</verse>
				<verse number="22">ಆತನ ವಿಧಿನಿಯಮಗಳನು ಅಲಕ್ಷ್ಯಮಾಡದೆ I ಆತನಾಜ್ಞೆಗಳನ್ನಿಟ್ಟೆ ಸದಾ ನನ್ನ ಕಣ್ಗಳ ಮುಂದೆ II</verse>
				<verse number="23">ಪಾಪದಲಿ ಬೀಳದೆ ನಡೆದೆ ಎಚ್ಚರಿಕೆಯಾಗಿ I ಆತನ ದೃಷ್ಟಿಯಲಿದ್ದೆ ನಿರ್ದೋಷಿಯಾಗಿ II</verse>
				<verse number="24">ನಾ ನೀತಿವಂತ, ನಿರಪರಾಧಿಯೆಂದರಿತು I ನನಗಿತ್ತನಾ ಪ್ರಭು ತಕ್ಕ ಪ್ರತಿಫಲವನು II</verse>
				<verse number="25">ಕರುಣೆಯುಳ್ಳವನಿಗಾತ ಕರುಣಾಮಯಿ I ದೋಷರಹಿತನಿಗಾತ ನಿರ್ದೋಷಿ II</verse>
				<verse number="26">ಶುದ್ಧನಿಗಾತ ಪರಿಶುದ್ಧನು I ಮೂರ್ಖನಿಗಾತ ಮಹಾವಕ್ರನು II</verse>
				<verse number="27">ದೀನದಲಿತರನು ಉದ್ಧರಿಸುವವನು ನೀನು I ತಗ್ಗಿಸಿಬಿಡುವೆಯಲ್ಲವೆ ಪ್ರಭು, ಸೊಕ್ಕಿನ ಲೋಚಕರನು? II</verse>
				<verse number="28">ಹೊತ್ತಿಸುವೆ ಪ್ರಭು, ನೀನೆನ್ನ ಬಾಳಿನ ದೀಪವನು I ಕತ್ತಲನು ನೀಗಿಸಿ ಜ್ಯೋತಿ ಬೆಳಗುವನಾ ದೇವನು II</verse>
				<verse number="29">ನಿನ್ನ ಶಕ್ತಿಯಿದ್ದಲ್ಲಿ ನಾ ದಂಡಿನ ಮೇಲೆ ಬೀಳಬಲ್ಲೆ I ದೇವನೆರವಿದ್ದಲ್ಲಿ ನಾ ಕೋಟೆಕೊತ್ತಲನೆ ಹಾರಬಲ್ಲೆ II</verse>
				<verse number="30">ದೇವರ ಮಾರ್ಗ ದೋಷರಹಿತ I ಸರ್ವೇಶ್ವರನ ವಚನ ಪರಮಪುನೀತ I ಆಶ್ರಿತರೆಲ್ಲರಿಗಾತ ರಕ್ಷಣಾಕವಚ II</verse>
				<verse number="31">ಪ್ರಭುವಲ್ಲದೆ ಇನ್ನಾವ ದೇವರುಂಟು? I ನಮ್ಮ ದೇವನಲ್ಲದೆ ಉದ್ಧಾರಕನೆಲ್ಲುಂಟು? II</verse>
				<verse number="32">ನಡುಕಟ್ಟಾಗಿ ನನಗೆ ಬಿಗಿದಿದ್ದಾನೆ ಶೌರ್ಯ I ಆತನಿಂದಲೇ ಸರಾಗ ನನ್ನ ಮಾರ್ಗ II</verse>
				<verse number="33">ನನಗಿತ್ತನಾತ ಹುಲ್ಲೆಯಂತ ಮೊನೆಗಾಲು I ಎನ್ನ ಬಿಗಿ ನಿಲ್ಲಿಸಿದ ಮಲೆಗಳ ಮೇಲೂ II</verse>
				<verse number="34">ಯುದ್ಧವಿದ್ಯೆಯ ಕಲಿತೆ ಆತನಿಂದಲೆ I ಎಂದೇ ನಾ ಕಂಚಿನ ಬಿಲ್ಲನೆ ಬಗ್ಗಿಸಬಲ್ಲೆ II</verse>
				<verse number="35">ನನ್ನ ಪರ ನೀನೇ ಗುರಾಣಿ ಹಿಡಿದು ರಕ್ಷಿಸಿದೆ I ನಿನ್ನ ಬಲಗೈ ನನಗೆ ಆಧಾರವಾಗಿದೆ I ನಿನ್ನ ಕೃಪಾವರ ತಂದಿತು ನನಗೆ ದೊಡ್ಡಸ್ತಿಕೆ II</verse>
				<verse number="36">ನೀನಿತ್ತೆ ನನ್ನ ಪಾದಗಳಿಗೆ ವಿಶಾಲಸ್ಥಳ I ನನ್ನ ಹೆಜ್ಜೆಗಳು ಕದಲವು ಈ ನಿಮಿತ್ತ II</verse>
				<verse number="37">ಹಿಡಿದುಕೊಳ್ವೆನು ಶತ್ರುಗಳನು ಬೆನ್ನಟ್ಟಿ I ಅವರನು ನಿರ್ಮೂಲ ಮಾಡದೆ ಬರೆನು ಹಿಂತಿರುಗಿ II</verse>
				<verse number="38">ಅವರನು ಮತ್ತೆ ಏಳದಂತೆ ಹೊಡೆದೆ I ಅವರು ಕಾಲಿಗೆ ಬೀಳುವಂತೆ ಮಾಡಿದೆ II</verse>
				<verse number="39">ನನಗಿತ್ತೆ ನೀ ಕದನಕ್ಕಾಗುವ ಶೌರ್ಯವೆಂಬ ನಡುಕಟ್ಟು I ತಗ್ಗಿಸಿದೆ ಎದುರಾಳಿಗಳನು ನನಗಧೀನ ಮಾಡಿಬಿಟ್ಟು II</verse>
				<verse number="40">ಆ ಶತ್ರುಗಳೋಡಿದರು ನನಗೆ ಬೆಂಗೊಟ್ಟು I ಆ ಹಗೆಗಳನು ನಿರ್ಮೂಲ ಮಾಡಿದೆ ನಾ ಗುರಿಯಿಟ್ಟು II</verse>
				<verse number="41">ಎಲ್ಲಿ ಯಾಚಿಸಿದರೂ ಅವರಿಗಿರಲಿಲ್ಲ ರಕ್ಷಕ I ಸರ್ವೇಶ್ವರನಿಗೆ ಮೊರೆಯಿಟ್ಟರು ದೊರಕಲಿಲ್ಲ ಉತ್ತರ II</verse>
				<verse number="42">ಪುಡಿಪುಡಿ ಮಾಡಿದೆ ನಾನವರನು ಗಾಳಿಗೆ ತೂರುವ ಧೂಳಿನಂತೆ I ಎತ್ತೆಸೆದುಬಿಟ್ಟೆ ನಾನವರನು ಮೋರಿಯ ಕೆಸರಿನಂತೆ II</verse>
				<verse number="43">ಜನರ ಒಳಕಲಹದಿಂದೆನ್ನ ನೀ ತಪ್ಪಿಸಿದೆ I ನನ್ನನುಳಿಸಿ ಜನಾಂಗಗಳಿಗೆ ಜನಪನಾಗಿಸಿದೆ I ನಾನರಿಯದ ಜನರನೂ ನನಗಧೀನರನ್ನಾಗಿಸಿದೆ II</verse>
				<verse number="44">ದೇಶಾಂತರದವರೂ ಮುದುರಿಕೊಂಡರು ನನ್ನ ಮುಂದೆ I ವಿಧೇಯರಾದರೆನಗೆ ನನ್ನ ಸುದ್ದಿ ಕೇಳಿದ ಮಾತ್ರಕೆ II</verse>
				<verse number="45">ಎದೆಗುಂದಿದವರಾದರು ಆ ವಿದೇಶಿಯರು I ತಮ್ಮ ಕೋಟೆಯಿಂದ ನಡುಗುತ್ತಾ ಹೊರಬಂದರು II</verse>
				<verse number="46">ಸರ್ವೇಶ್ವರನು ಚೈತನ್ಯಸ್ವರೂಪನು I ನನ್ನುದ್ಧಾರಕನಾದವಗೆ ಸ್ತುತಿಸ್ತೋತ್ರವು I ನನ್ನ ರಕ್ಷಿಸುವ ದೇವರಿಗೆ ಜಯಕಾರವು II</verse>
				<verse number="47">ನನ್ನ ಶತ್ರುಗಳಿಗೆ ವಿಧಿಸುವನಾದೇವ ಪ್ರತಿದಂಡನೆ I ಜನಾಂಗಗಳನು ಅಧೀನಪಡಿಸುವನಾತ ನನಗೆ II</verse>
				<verse number="48">ಶತ್ರುಗಳಿಂದ ನೀನೆನ್ನ ಮುಕ್ತಗೊಳಿಸಿದೆ I ಎದುರಾಳಿಗೆ ತಪ್ಪಿಸಿ ನನ್ನನ್ನುನ್ನತಿಗೇರಿಸಿದೆ I ಹಿಂಸಾತ್ಮಕರಿಂದ ನೀಯೆನ್ನ ಸಂರಕ್ಷಿಸಿದೆ II</verse>
				<verse number="49">ಎಂತಲೆ, ಅನ್ಯಜನಗಳ ಮಧ್ಯೆ ನಿನ್ನ ಸ್ತುತಿಪೆನು I ನಿನ್ನ ನಾಮವನು ಸರ್ವೇಶ್ವರಾ, ಸಂಕೀರ್ತಿಪೆನು II</verse>
				<verse number="50">ತಾನೇ ನೇಮಿಸಿದ ಅರಸನಿಗೆ I ಆತನೀವನು ವಿಶೇಷ ರಕ್ಷಣೆ II</verse>
				<verse number="51">ಅನುಗ್ರಹಿಸುವನಾತ ಅನಂತಾನಂತ ಕೃಪೆ I ತಾನಭಿಷೇಕಿಸಿದ ದಾವೀದನಿಗೆ, ಆತನ ಸಂತತಿಗೆ II</verse>
			</chapter>
			<chapter number="19">
				<verse number="1">ಆಕಾಶಮಂಡಲ ಸಾರುತಿದೆ ದೇವರ ಮಹಿಮೆಯನು I ತಾರಾಮಂಡಲ ತೋರುತಿದೆ ದೇವರ ಕೈಕೃತಿಗಳನು II</verse>
				<verse number="2">ದಿನವು ಮರುದಿನಕೆ ಮಾಡುತಿದೆ ಈ ಪ್ರಕಟಣೆಯನು I ರಾತ್ರಿ ಮರುರಾತ್ರಿಗೆ ನೀಡುತಿದೆ ಈ ಪ್ರಚಾರವನು II</verse>
				<verse number="3">ಅವುಗಳಿಗೆ ಮಾತಿಲ್ಲ; ಅವುಗಳಿಗೆ ಶಬ್ದವಿಲ್ಲ I ಅವುಗಳ ಸ್ವರವಂತೂ ಕೇಳಿಬರುವುದಿಲ್ಲ II</verse>
				<verse number="4">ಆದರೂ ಅವುಗಳ ಧ್ವನಿರೇಖೆ ಹರಡಿದೆ ಬುವಿಯಾದ್ಯಂತ I ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ II</verse>
				<verse number="5">ನಿರ್ಮಿಸಿಹನಲ್ಲಿ ದೇವನು ಗುಡಾರವೊಂದನು ಸೂರ್ಯನಿಗೆ I ಬರುತಿಹನಾ ರವಿ ವರನಂತೆ ಧಾರಾಗೃಹದಿಂದ ಹೊರಗೆ I ಶೂರನಂತೆ, ಓಟದ ಪಥದಲ್ಲೋಡಲು ಹರುಷದೊಂದಿಗೆ II</verse>
				<verse number="6">ಏರುತಿಹನು ದಿಗಂತದೊಂದು ಕೊನೆಯಿಂದ ಮತ್ತೊಂದು ಕೊನೆಗೆ I ಮುಚ್ಚುಮರೆಯಾದುದೊಂದೂ ಇರದು, ಆತನಾ ಉರಿಗಣ್ಣಿಗೆ II</verse>
				<verse number="7">ಪ್ರಭುವಿನ ಆಜ್ಞೆ ಪರಿಪೂರ್ಣ; ಜೀವನಕದು ನವಚೇತನ I ನಂಬಲರ್ಹ; ಪ್ರಭುವಿನ ಶಾಸನ ಮುಗ್ದರಿಗದು ಸುಜ್ಞಾನ II</verse>
				<verse number="8">ಪ್ರಭುವಿನ ನಿಯಮ ನೀತಿಬದ್ಧ; ಮನಸ್ಸಿಗದು ಒಸಗೆ I ಪ್ರಭುವಿನ ಕಟ್ಟಳೆ ಪರಿಶುದ್ಧ; ಕಣ್ಣಿಗದು ದೀವಿಗೆ II</verse>
				<verse number="9">ಪ್ರಭುವಿನ ಭೀತಿ ಪವಿತ್ರ; ಅದೆಂದಿಗೂ ಶಾಶ್ವತ I ಪ್ರಭುವಿನ ತೀರ್ಪು ಯಥಾರ್ಥ; ಪರಿಪೂರ್ಣ ನ್ಯಾಯಯುತ II</verse>
				<verse number="10">ಅಪೇಕ್ಷಣೀಯವಾದುವವು ಚಿನ್ನ ಅಪರಂಜಿಗಿಂತ I ಅತಿಮಧುರವಾದುವು ಅಪ್ಪಟ ಜೇನುತುಪ್ಪಕ್ಕಿಂತ II</verse>
				<verse number="11">ಜಾಗೃತಗೊಳ್ಳುವನು ನಿನ್ನ ದಾಸನು ಅವುಗಳಿಂದ I ಸಂಭಾವಿತನಾಗುವನು ಅವುಗಳ ಪಾಲನೆಯಿಂದ II</verse>
				<verse number="12">ತನ್ನ ತಪ್ಪನು ತಾನರಿತುಕೊಳ್ಳುವವನಾರಯ್ಯಾ I ಗುಪ್ತವಾದ ಪಾಪಗಳಿಂದೆನ್ನ ಮುಕ್ತಗೊಳಿಸಯ್ಯಾ II</verse>
				<verse number="13">ಕಾಪಾಡೆನ್ನನು, ಬೇಕು ಬೇಕೆಂದು ಪಾಪಮಾಡದಂತೆ I ಕಾದಿಡು, ಅಂಥ ಪಾಪಕೆ ನಾ ದಾಸನಾಗದಂತೆ I ನಿರ್ದೋಷಿಯಾಗುವೆನು, ಆ ದ್ರೋಹಕ್ಕೊಳಗಾಗದಂತೆ II</verse>
				<verse number="14">ನಿನಗೊಪ್ಪಿಗೆಯಾಗಲಿ ನನ್ನ ಬಾಯಮಾತು, ಹೃದಯಧ್ಯಾನ I ನೀನೆನ್ನ ಪ್ರಭು, ನನಗೆ ಉದ್ಧಾರಕ, ನನಗಾಶ್ರಯಧಾಮ II</verse>
			</chapter>
			<chapter number="20">
				<verse number="1">ಸಂಕಟ ಬಂದಾಗ, ಪ್ರಭು ನಿನಗೆ ಕಿವಿಗೊಡಲಿ I ಯಕೋಬ ದೇವರ ನಾಮ, ನಿನ್ನ ಕಾಪಾಡಲಿ II</verse>
				<verse number="2">ನೆರವು ನೀಡಲಾತ ಪವಿತ್ರಾಲಯದಿಂದ I ನಿನಗೊತ್ತಾಸೆ ಬರಲಿ, ಸಿಯೋನ್ ಶಿಖರದಿಂದ II</verse>
				<verse number="3">ನೆನಸಿಕೊಳ್ಳಲಾತ ನೀನರ್ಪಿಸಿದ ಕಾಣಿಕೆಗಳನು I ಒಲಿದು ಸ್ವೀಕರಿಸಲಿ, ನೀನಿತ್ತಾ ಯಜ್ಞಬಲಿಗಳನು II</verse>
				<verse number="4">ನೆರವೇರಿಸಲಿ ಆತ ನಿನ್ನಿಷ್ಟಾರ್ಥಗಳನು I ಪೂರೈಸಲಿ ಪ್ರಭು ನಿನ್ನಭೀಪ್ಸೆಗಳೆಲ್ಲವನು II</verse>
				<verse number="5">ಜಯಘೋಷ ಮಾಡುವೆವು, ನಿನ್ನ ಗೆಲುವಿನ ನಿಮಿತ್ತ I ಧ್ವಜ ಹಾರಿಪೆವು, ಎಮ್ಮ ದೇವನ ನಾಮದ ನಿಮಿತ್ತ I ನಿನ್ನ ಕೋರಿಕೆಗಳೆಲ್ಲವನು, ಕೈಗೂಡಿಸಲಿ ಆತ II</verse>
				<verse number="6">ಒದಗುವನು ಪ್ರಭುವು ಅಭಿಷಿಕ್ತನಿಗೆ I ಓಗೊಡುವನು ಸ್ವರ್ಗದಿಂದಾತನಿಗೆ I ಗೆಲುವನೀವನು ಭುಜಬಲದಿಂದವನಿಗೆ II</verse>
				<verse number="7">ಹೆಚ್ಚಳಪಡುತಿಹರು ಕೆಲವರು ರಥಗಳಲಿ, ಹಲವರು ಅಶ್ವಗಳಲಿ I ಹೆಮ್ಮೆಪಡುತಿಹೆವು ನಾವಾದರೋ, ನಮ್ಮ ದೇವರ ನಾಮದಲಿ II</verse>
				<verse number="8">ಕೆಳಗಿಳಿವರವರು, ಕುಸಿದು ಬೀಳುವರವರು I ಏಳುವೆವು, ಸ್ಥಿರನಿಲ್ಲುವೆವು ನಾವೆಲ್ಲರು II</verse>
				<verse number="9">ಜಯವ ನೀಡು ಪ್ರಭು, ಅರಸನಿಗೆ I ಕಿವಿಗೊಡು ನೀ, ನಮ್ಮ ಪ್ರಾರ್ಥನೆಗೆ II</verse>
			</chapter>
			<chapter number="21">
				<verse number="1">ಅರಸಗೆ ಹರ್ಷವಾಯಿತು ಪ್ರಭು, ನೀ ತೋರಿದ ಪರಾಕ್ರಮಕ್ಕಾಗಿ I ಪರಮಾನಂದಗೊಂಡನವನು, ನೀನಿತ್ತ ವಿಜಯೋತ್ಸವಕ್ಕಾಗಿ II</verse>
				<verse number="2">ಆತನ ಮನದಾಸೆಯನು ನೀ ಪೂರೈಸಿದೆ I ಆತನಧರ ಬಯಕೆಯನು ಅನುಗ್ರಹಿಸಿದೆ II</verse>
				<verse number="3">ನೀನಾತನನು ಸ್ವಾಗತಿಸಿದೆ ಶುಭಾಶಯದೊಂದಿಗೆ I ಚಿನ್ನದ ಕಿರೀಟವನು ಮುಡಿಸಿದೆ ಆತನ ಶಿರಸ್ಸಿಗೆ II</verse>
				<verse number="4">ಕೋರಿದನಾತನು ಜೀವಮಾನಕಾಲವನು I ನೀನಿತ್ತೆ ಯುಗಯುಗಾಂತರದಾಯುಷ್ಯವನು II</verse>
				<verse number="5">ನಿನ್ನ ನೆರವಿಂದೇರಿತು ಆತನ ಘನತೆ I ಶೋಭೆ, ಪ್ರಭಾವಗಳ ನೀನವನಿಗಿತ್ತೆ II</verse>
				<verse number="6">ಅಮರ ಭಾಗ್ಯಗಳನು ನೀನನುಗ್ರಹಿಸಿದೆ I ಶ್ರೀಸನ್ನಿಧಿಯಲಾತನನು ತೋಷಗೊಳಿಸಿದೆ II</verse>
				<verse number="7">ಅರಸನಿಗಿದೆ ಭರವಸೆ ಪ್ರಭುವಿನಲಿ I ಅವನಚಲನು, ಪರಾತ್ಪರನ ಕೃಪೆಯಲಿ II</verse>
				<verse number="8">ಶತ್ರುಗಳೆಲ್ಲರು ಸಿಕ್ಕಿಹೋಗುವರು ನಿನ್ನ ಕೈಗೆ I ಹಗೆಗಳೆಲ್ಲ ಸಿಕ್ಕಿಬೀಳುವರು ನಿನ್ನ ಬಲಗೈಗೆ II</verse>
				<verse number="9">ಅಗ್ನಿಕುಂಡವಾಗುವರವರು ನೀ ಪ್ರತ್ಯಕ್ಷನಾದಾಗ I ಕಬಳಿಸುವುದು ಕೋಪಾಗ್ನಿ, ಭಸ್ಮವಾಗ್ವರು ಪ್ರಭು ಬಂದಾಗ II</verse>
				<verse number="10">ನಿರ್ಮೂಲಮಾಡುವೆ ನೀನವರ ಸಂತಾನವನು ಧರೆಯಿಂದ I ಕುಡಿಯಿಲ್ಲದಾಗಿಸುವೆ ಅವರನು ಮಾನವರ ಮಧ್ಯದಿಂದ II</verse>
				<verse number="11">ತಂತ್ರೋಪಾಯಗಳ ಕಲ್ಪಿಸಿದರೂ ನಡೆಯದು I ಕೇಡನು ನಿನಗೆ ಬಗೆದರೂ ಅದು ಕೈಗೂಡದು II</verse>
				<verse number="12">ಬಾಣ ಹೂಡಿ ಅವರ ಹಣೆಗೆ ನೀ ಬಿಡುವೆ I ಬೆನ್ನುಮಾಡಿ ಅವರೋಡುವಂತೆ ಮಾಡುವೆ II</verse>
				<verse number="13">ಹೇ ಪ್ರಭು, ಪರಾಕ್ರಮ ತೋರಿ, ಪರಮಪದಗಳಿಸಿಕೊ I ಕೀರ್ತಿಸುತ ನಿನ್ನ ಸಾಮರ್ಥ್ಯವನು, ಪೊಗಳುವೆನಿದೊ II</verse>
			</chapter>
			<chapter number="22">
				<verse number="1">ದೇವಾ, ಓ ಎನ್ನ ದೇವಾ, ಏಕೆನ್ನ ಕೈಬಿಟ್ಟೆ? I ಕಿವಿಗೊಡದೆ ಏಕೆ ದೂರವಾಗಿಬಿಟ್ಟೆ? II</verse>
				<verse number="2">ಹಗಲೆಲ್ಲ ಕೂಗಿಕೊಂಡರೂ ನೀ ಬರಲಿಲ್ಲವಲ್ಲಾ I ಇರುಳೆಲ್ಲಾ ಮೊರೆಯಿಟ್ಟರೂ ನೆಮ್ಮದಿಯಿಲ್ಲವಲ್ಲಾ II</verse>
				<verse number="3">ಆದರೂ ದೇವಾ, ನೀನಂತು ಪರಮಪೂಜ್ಯನು I ಇಸ್ರಯೇಲರ ಸ್ತುತ್ಯ ಸಿಂಹಾಸನದಲಿ ಆಸೀನನು II</verse>
				<verse number="4">ನಿನ್ನಲಿ ಭರವಸೆಯಿತ್ತರು ನಮ್ಮ ಪೂರ್ವಜರು I ಉದ್ಧಾರವಾದರು ನಿನ್ನ ನಂಬಿದವರೆಲ್ಲರು II</verse>
				<verse number="5">ನಿನಗೆ ಮೊರೆಯಿಟ್ಟವರು ವಿಮುಕ್ತರಾದರಯ್ಯಾ I ವಿಶ್ವಾಸವಿಟ್ಟು ಹತಾಶರಾಗಲಿಲ್ಲವಯ್ಯಾ II</verse>
				<verse number="6">ಮನುಜ ನಾನು, ಕ್ರಿಮಿಕೀಟಕೆ ಸಮಾನನು I ಅಲಕ್ಷಿತನು, ಪರರಿಂದ ತಿರಸ್ಕೃತನು II</verse>
				<verse number="7">ನೋಡುವವರೆಲ್ಲಾ ಎನ್ನನಣಕಿಸುತಿಹರು I ತುಟಿಯೋರೆ ಮಾಡಿ ತಲೆಯಾಡಿಸುತಿಹರು II</verse>
				<verse number="8">“ಇತ್ತನಿವನು ಭರವಸೆ, ಪ್ರಭುವೆ ತನ್ನುದ್ಧಾರಕನೆಂದು I ಆತನಿಗಿವನು ಮೆಚ್ಚುಗೆಯಾದರೆ ರಕ್ಷಿಸಲಿ” - ಇಂತೆಂದು II</verse>
				<verse number="9">ಮಾತೆಯುದರದಿಂದ ಎನ್ನನು ಹೊರಬರಿಸಿದವನು ನೀನು I ನಿಶ್ಚಿಂತೆಯಾ ಕೂಸನು ಆಕೆಯ ಮಡಿಲಲಿ ಇರಿಸಿದವನು ನೀನು II</verse>
				<verse number="10">ಆಗರ್ಭದಿಂದಲೆ ನೀನೆನಗಧಾರ I ತಾಯಿ ಹೆತ್ತಂದಿನಿಂದಲೇ ಕರ್ತಾರ II</verse>
				<verse number="11">ದುರುಳರು ಅರುಗಲೇ ಇರೆ, ನೆರವಿಗಾರೂ ಇಲ್ಲ I ನನ್ನಿಂದ ನೀ ದೂರಸರಿವುದು ಸರಿಯಲ್ಲ II</verse>
				<verse number="12">ಸುತ್ತಿಕೊಂಡಿವೆಯೆನ್ನನು ಬಲವಂತ ಹೋರಿಗಳು I ಮುತ್ತಿಕೊಂಡಿವೆ ಬಾಷಾನಿನ ಹಲವು ಗೂಳಿಗಳು II</verse>
				<verse number="13">ಗರ್ಜಿಸುವ ಉಗ್ರಸಿಂಹಗಳಂತೆ ವೈರಿಗಳು I ಕಾದಿಹರು ಬಾಯಿ ತೆರೆದು ನನ್ನ ಕಬಳಿಸಲು II</verse>
				<verse number="14">ಕ್ಷಯಿಸುತ್ತಿರುವೆ ನಾ ಚೆಲ್ಲಿದ ನೀರಿನಂತೆ I ಎಲುಬುಗಳು ಅಲುಗಿವೆ, ಎದೆ ಕರಗಿದೆ ಮೇಣದಂತೆ II</verse>
				<verse number="15">ಎನ್ನ ಗೋಣು ಒಣಗಿಹೋಗಿದೆ ಒಡೆದ ಮಡಕೆಯಂತೆ I ಅಂಗುಳಕೆ ಜಿಹ್ವೆ ಅಂಟಿದೆ; ಮಣ್ಣಿಗೆನ್ನ ಸೇರಿಸಿದೆ II</verse>
				<verse number="16">ಮುತ್ತಿದೆ ದುರುಳರ ಹಿಂಡು; ಸುತ್ತಿವೆ ಕುನ್ನಿಗಳು I ಕುತ್ತಿವೆ ನನ್ನ ಕೈಗಳು ಮೇಣ್ ಕಾಲುಗಳು II</verse>
				<verse number="17">ಎಣಿಸಬಹುದಿದೆ ನನ್ನೆಲುಬುಗಳೆಲ್ಲವನು I ಹಿಗ್ಗುತಿಹರು ದುರುಗುಟ್ಟಿ ನೋಡೆನ್ನನು II</verse>
				<verse number="18">ನನ್ನ ಉಡುಗೆಗಳನ್ನು ಹಂಚಿಕೊಂಡರು I ನನ್ನ ಅಂಗಿಗೋಸ್ಕರ ಚೀಟುಹಾಕಿದರು II</verse>
				<verse number="19">ನನ್ನಿಂದ ದೂರ ಸರಿಯಲುಬೇಡ, ಪ್ರಭು I ನೀನೆನ್ನ ಶಕ್ತಿ, ನೆರವಾಗಲು ತ್ವರೆಮಾಡು II</verse>
				<verse number="20">ಕತ್ತಿಗೆ ತುತ್ತಾಗದಂತೆ ತಪ್ಪಿಸು I ಕುಕ್ಕುರಗಳಿಂದ ಪ್ರಾಣವನುಳಿಸು II</verse>
				<verse number="21">ರಕ್ಷಿಸೆನ್ನನು ಸಿಂಹದ ಬಾಯಿಂದ I ಬಿಡಿಸು ಕಾಡುಕೋಣದ ಕೊಂಬಿನಿಂದ II</verse>
				<verse number="22">ಸೋದರರಿಗೆ, ಸಾರುವೆ ನಿನ್ನ ನಾಮ ಮಹಿಮೆಯನ್ನು I ತುಂಬಿದ ಸಭೆಯಲಿ ಮಾಡುವೆ, ನಿನ್ನ ಸ್ತುತಿಯನ್ನು II</verse>
				<verse number="23">ಮಣಿಯಿರಿ, ಪ್ರಭುವಿನಲಿ ಭಯಭಕುತಿಯುಳ್ಳವರೇ I ಭಜಿಸಿರಿ ಇಸ್ರಯೇಲರೇ, ಯಾಕೋಬ ಕುಲಜರೇ II</verse>
				<verse number="24">ತೃಣೀಕರಿಸನು, ತಿರಸ್ಕರಿಸನು ದಲಿತನನು I ವಿಮುಖನಾಗನು, ಪ್ರಾರ್ಥನೆಗೆ ಕಿವಿಗೊಡುವನು II</verse>
				<verse number="25">ಪ್ರಭು, ನೀನೆ ಸ್ಪೂರ್ತಿ, ತುಂಬುಸಭೆಯಲಿ ನಾ ಮಾಳ್ಪ ಸ್ತುತಿಗೆ I ಭಕ್ತಜನರ ಮುಂದೆ ನಾ ಸಲ್ಲಿಸುವೆ, ನಿನಗೆ ಹೊತ್ತ ಹರಕೆ II</verse>
				<verse number="26">ಹರಿವುದು ಸ್ತುತಿ ಭಕ್ತರ ಬಾಯಿಂದ; ತುಂಬುವುದು ದಲಿತರುದರ I ಇರಲಿ ಚೈತನ್ಯಭರಿತ ನಿಮ್ಮಂತರಂಗವು ನಿರಂತರ II</verse>
				<verse number="27">ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II</verse>
				<verse number="28">ಪ್ರಭುವಿಗೆ ಸೇರಿದುದು ರಾಜ್ಯಭಾರವೆಲ್ಲವು I ಆತನದೆ ರಾಷ್ಟ್ರಗಳ ಒಡೆತನವೆಲ್ಲವು II</verse>
				<verse number="29">ತಲೆಬಾಗುವರಾತನಿಗೆ ಧರೆಯ ಗರ್ವಿಗಳೆಲ್ಲರು I ಅಡ್ಡಬೀಳುವರವನಿಗೆ ಮರ್ತ್ಯಮಾನವರೆಲ್ಲರು II</verse>
				<verse number="30">ವಂದಿಪುದು ಪ್ರಭುವನು ಮುಂದಿನ ಪೀಳಿಗೆ I ಸಾರುವುದಾತನ ವದಂತಿಯನು ಜನರಿಗೆ II</verse>
				<verse number="31">ಸಾರುವರು ಮುಂದಿನ ಜನತೆಗುದ್ಧಾರವನು I ಅರುಹುವರು ಆತನೆಸಗಿದ ಮಹತ್ಕಾರ್ಯವನು II</verse>
			</chapter>
			<chapter number="23">
				<verse number="1">ಪ್ರಭು ಕುರಿಗಾಹಿಯಾಗಿರಲು ನನಗೆ I ಕುಂದುಕೊರತೆಗಳೆಲ್ಲಿಯವು ಎನಗೆ? II</verse>
				<verse number="2">ಹಸಿರುಗಾವಲುಗಳಲೆನ್ನ ತಂಗಿಸುವನು I ತಿಳಿಕೊಳಗಳ ಬಳಿಗೆನ್ನ ಕರೆದೊಯ್ಯುವನು II</verse>
				<verse number="3">ಪುನಶ್ಚೇತನಗೊಳಿಸುವನು ನನ್ನ ಪ್ರಾಣವನಾತ I ಸನ್ಮಾರ್ಗದಲಿ ನಡೆಸುವನು ತನ್ನ ನಾಮನಿಮಿತ್ತ II</verse>
				<verse number="4">ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II</verse>
				<verse number="5">ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II</verse>
				<verse number="6">ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ I ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ II</verse>
			</chapter>
			<chapter number="24">
				<verse number="1">ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ I ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ II</verse>
				<verse number="2">ಕಡಲನು ತಳಪಾಯವನಾಗಿಸಿದವನು ಆತನೆ I ಜಲರಾಶಿ ನಡುವೆ ಅದನು ಸ್ಥಿರಗೊಳಿಸಿದವನಾತನೆ II</verse>
				<verse number="3">ಪ್ರಭುವಿನ ಶಿಖರವನು ಏರಬಲ್ಲವನಾರು? I ಆ ನಿವಾಸದಲಿ ನಿಲ್ಲಲು ಯೋಗ್ಯನಾರು? II</verse>
				<verse number="4">ಅಂಥವನಿರಬೇಕು ಶುದ್ಧಹಸ್ತನು, ಸುಮನಸ್ಕನು I ಅನಾಚಾರಕೆ, ಅಪಮಾಣಿಕತೆಗೆ ಒಲಿಯನವನು II</verse>
				<verse number="5">ಲಭಿಸುವುದಾತನಿಗೆ ಶುಭ ಪ್ರಭುವಿನಿಂದ I ನೀತಿಯ ಸತ್ಫಲ ರಕ್ಷಕ ದೇವನಿಂದ II</verse>
				<verse number="6">ಇಂಥವರೆ ದೇವರ ದರ್ಶನಾಭ್ಯರ್ಥಿಗಳು I ಇಂಥವರೆ ಯಕೋಬ ದೇವನ ಭಕ್ತಾದಿಗಳು II</verse>
				<verse number="7">ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು I ತೆರೆದು ಸ್ವಾಗತಿಸಲಿ ಕದಗಳು, ಸನಾತನ ದ್ವಾರಗಳು II</verse>
				<verse number="8">ಯಾರಿವನು ಮಹಿಮಾವಂತ ರಾಜಾಧಿರಾಜನು? I ಇವನೇ ಪ್ರಭು, ಯುದ್ಧವೀರನು, ಶಕ್ತಿಸಮರ್ಥನು! II</verse>
				<verse number="9">ಆಗಮಿಸುತಿಹನಿದೋ ಮಹಿಮಾವಂತ ರಾಜಾಧಿರಾಜನು I ತೆರೆದು ಸ್ವಾಗತಿಸಲಿ ಕದಗಳು, ಸನಾತನ ದ್ವಾರಗಳು II</verse>
				<verse number="10">ಯಾರಿವನು ಮಹಿಮಾವಂತ ರಾಜಾಧಿರಾಜನು? I ಇವನೇ ಸೇನಾಧೀಶ್ವರನು, ಮಹಿಮಾರಾಜನು II</verse>
			</chapter>
			<chapter number="25">
				<verse number="1">ಎತ್ತಿರುವೆ ಪ್ರಭೂ, ಹೃನ್ಮನಗಳನು ನಿನ್ನತ್ತ I ಇಟ್ಟಿರುವೆ ಭರವಸೆ ನಿನ್ನಲೆ ದೇವಾ ಸನ್ನುತ II</verse>
				<verse number="2">ಶತ್ರುಗಾಗದಿರಲಿ ಸಡಗರ I ನನಗೊದಗದಿರಲಿ ಮುಜುಗರ II</verse>
				<verse number="3">ಆಗಲಿ ಆಶಾಭಂಗ ನಿನ್ನೆದುರಾಳಿಗಳಿಗೆ I ಹಾಗಾಗದಿರಲಿ ನಿನ್ನ ನಿರೀಕ್ಷಿಸುವವರಿಗೆ II</verse>
				<verse number="4">ನಿನ್ನ ಮಾರ್ಗವನು ಪ್ರಭು ನನಗೆ ತೋರಿಸು I ನೀನೊಪ್ಪುವ ಪಥದಲಿ ನಾ ನಡೆಯ ಕಲಿಸು II</verse>
				<verse number="5">ಸನ್ಮಾರ್ಗದಲಿ ಮುನ್ನಡೆಸೆನ್ನ ದೇವಾ, ಮುಕ್ತಿದಾತ I ಕಲಿಸೆನಗೆ, ನಿನಗಾಗಿ ಕಾದಿರುವೆ ಸತತ II</verse>
				<verse number="6">ನೆನೆಸಿಕೋ ಪ್ರಭು, ನಿನ್ನ ನಿರಂತರ ಕರುಣೆಯನು I ಆದಿಯಿಂದ ನೀ ತೋರಿದಚಲ ಪ್ರೀತಿಯನು II</verse>
				<verse number="7">ಯೌವನದೆನ್ನ ಪಾಪಪ್ರವೃತ್ತಿಗಳ ಮನದಲ್ಲಿಟ್ಟುಕೊಳ್ಳಬೇಡ I ನಿನ್ನೊಲುಮೆ ನಲ್ಮೆಗಳ ನಿಮಿತ್ತ ಪ್ರಭು, ನನ್ನ ನೆನೆಯದಿರಬೇಡ II</verse>
				<verse number="8">ಸತ್ಯಸ್ವರೂಪನು, ದಯಾವಂತನು ಪ್ರಭು I ದಾರಿತಪ್ಪಿದವರಿಗೆ ಬೋಧಕನು ವಿಭು II</verse>
				<verse number="9">ದೀನರನು ನಡೆಸುವನು ತನ್ನ ವಿಧಿಗನುಸಾರ I ದಲಿತರಿಗೆ ಕಲಿಸುವನು ತನ್ನ ಧರ್ಮಾಚಾರ II</verse>
				<verse number="10">ಪ್ರಭುವಿನೊಪ್ಪಂದಗಳ ಪಾಲಕರಿಗೆ ಆತನ ಮಾರ್ಗಗಳು ಸನ್ನುತ I ಆತನ ವಿಧಿ ನಿಬಂಧನೆಗಳ ಪರಿಪಾಲಕರಿಗೆ ಅವುಗಳು ಸುಪ್ರೀತ II</verse>
				<verse number="11">ನಿನ್ನ ನಾಮದ ನಿಮಿತ್ತ ನನ್ನನು ಈಕ್ಷಿಸು I ಎನ್ನ ಘೋರ ಪಾಪವನು ಪ್ರಭು ಕ್ಷಮಿಸು II</verse>
				<verse number="12">ಪ್ರಭುವಿನ ಭಯಭಕುತಿಯುಳ್ಳವನಿಗೆ I ಲಭಿಪುದು ಖಚಿತ ಋಜುಮಾರ್ಗದ ಕಲಿಕೆ II</verse>
				<verse number="13">ಬಾಳುವನಂಥವನು ಸುಖಸೌಭಾಗ್ಯದಿಂದ I ಬದುಕುವುದವನ ಸಂತತಿ ನಾಡಿನೊಡೆತನದಿಂದ II</verse>
				<verse number="14">ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II</verse>
				<verse number="15">ತಿರುಗಿದೆ ಎನ್ನ ನಯನ ಪ್ರಭುವಿನತ್ತ I ಉರುಲಿಂದ ಕಾಲನು ಕಳಚಿದನಾತ II</verse>
				<verse number="16">ಒಬ್ಬೊಂಟಿಗನಾದೆ, ಸಿಕ್ಕಿಕೊಂಡೆ ಸಂಕಟಕೆ I ಕಟಾಕ್ಷಿಸೋ ಪ್ರಭು, ಕರುಣೆತೋರೋ ತಬ್ಬಲಿಗೆ II</verse>
				<verse number="17">ನಿವಾರಿಸೆನ್ನ ಮನಕ್ಲೇಶವನು I ಪರಿಹರಿಸೆನ್ನ ದುಃಖದುಗುಡವನು II</verse>
				<verse number="18">ನೋಡೆನ್ನ ಬಾಧೆ ಬವಣೆಗಳನು I ತೊಡೆದು ಹಾಕೆನ್ನ ಪಾಪಗಳನು II</verse>
				<verse number="19">ಶತ್ರುಗಳಿಹರು ನೋಡು ಸಹಸ್ರಾರು I ಕ್ರೋಧದಿಂದೆನ್ನ ಹಗೆ ಮಾಡುತಿಹರು II</verse>
				<verse number="20">ಕಾಪಾಡು ಪ್ರಭು, ರಕ್ಷಿಸೆನ್ನ ಪ್ರಾಣವನು I ನಿರಾಶೆಗೊಳಿಸಬೇಡ, ಶರಣಾಗತನು ನಾನು II</verse>
				<verse number="21">ನಿರ್ದೋಷ, ನಿಷ್ಕಪಟ ನಡತೆ ನನಗೆ ರಕ್ಷೆ I ನೀನೆ ಪ್ರಭು ನನಗಿರುವ ದೃಢ ನಿರೀಕ್ಷೆ II</verse>
				<verse number="22">ಉದ್ಧರಿಸು ದೇವಾ, ಇಸ್ರಯೇಲರನು I ಸಮಸ್ತ ಬೇನೆ ಬವಣೆಗಳಿಂದವರನು II</verse>
			</chapter>
			<chapter number="26">
				<verse number="1">ಸಾಚವಾದುದೆನ್ನ ನಡತೆ, ಅಚಲವಾದುದೆನ್ನ ನಂಬುಗೆ I ನೀಚ ನಾನಲ್ಲವೆಂದು ಪ್ರಭು, ನ್ಯಾಯ ತೀರಿಸೆನಗೆ II</verse>
				<verse number="2">ಪರೀಕ್ಷಿಸು ಪ್ರಭು, ಎನ್ನನು ಪರಿಶೀಲಿಸು I ಹೃನ್ಮನಗಳೆಲ್ಲವನು ನೀ ಪರಿಶೋಧಿಸು II</verse>
				<verse number="3">ಕೈಬಿಡದ ನಿನ್ನೊಲವು ನನ್ನ ಕಣ್ಮುಂದಿದೆ I ನೀ ತೋರಿದ ಸತ್ಯಪಥದಲಿ, ನಾ ನಡೆದೆ II</verse>
				<verse number="4">ದುಷ್ಟರ ಕೂಟದಲಿ ನಾ ಕೂರುವವನಲ್ಲ I ಕಪಟಿಗಳ ಸಂಘವನು ನಾ ಸೇರುವವನಲ್ಲ II</verse>
				<verse number="5">ದುರ್ಜನರ ಸಹವಾಸವದು ನನಗಸಹ್ಯ I ದುರುಳರೊಡನಾಟ ನನಗೆ ಬೇಡವಯ್ಯಾ II</verse>
				<verse number="6">ನಿರ್ದೋಷಿ ನಾನೆಂದು ನೀರಿನಲ್ಲಿ ಕೈತೊಳೆವೆನಯ್ಯಾ I ಪ್ರಭು, ನಿನ್ನ ಬಲಿಪೀಠದ ಪ್ರದಕ್ಷಿಣೆ ಮಾಡುವೆನಯ್ಯಾ II</verse>
				<verse number="7">ದನಿಯೆತ್ತಿ ನಿನಗೆ ಧನ್ಯಗೀತೆ ಹಾಡುವೆನಯ್ಯಾ I ನಿನ್ನದ್ಭುತ ಕಾರ್ಯಗಳೆಲ್ಲವನು ಘೋಷಿಸುವೆನಯ್ಯಾ II</verse>
				<verse number="8">ಪ್ರಿಯವಾದುದೆನಗೆ ನಿನ್ನ ನಿವಾಸದ ಮಂದಿರ I ಸುಪ್ರೀತವಾದುದು ನಿನ್ನ ಮಹಿಮೆಯ ಆಗರ II</verse>
				<verse number="9">ಪಾಪಿಗಳ ಸಮೇತ ಎನ್ನ ಪ್ರಾಣವನಳಿಸಬೇಡಯ್ಯಾ I ಕೊಲೆಪಾತಕರ ಸಮೇತ ಎನ್ನ ಜೀವ ತೆಗೆಯಬೇಡಯ್ಯಾ II</verse>
				<verse number="10">ಇದೆ ಆ ಜನರ ಕೈಗಳಲಿ ಕೆಡುಕನ I ಬಲಗೈ ತುಂಬ ಲಂಚಕೋರತನ II</verse>
				<verse number="11">ನೀತಿಯ ಪಥದೊಳು ನಾ ನಡೆವೆನಯ್ಯಾ I ಕರುಣೆ ತೋರುತ ಪ್ರಭು, ರಕ್ಷಿಸಯ್ಯಾ II</verse>
				<verse number="12">ಸಮತಳದಲಿ ನಿಂತಿವೆ ನನ್ನ ಪಾದಗಳು I ಸ್ತುತಿಸುವೆ ನಾ ಪ್ರಭುವನು ಭಕ್ತರ ಸಭೆಯೊಳು II</verse>
			</chapter>
			<chapter number="27">
				<verse number="1">ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II</verse>
				<verse number="2">ಕೇಡು ಮಾಡಬಂದರೆನಗೆ ಕೊಲೆಗಡುಕರು I ಎಡವಿಬಿದ್ದರು, ತಾವೇ ಅಳಿದುಹೋದರು II</verse>
				<verse number="3">ಸೇನೆ ಸಮೇತ ಶತ್ರು ಬಂದರೂ ಎದೆಗುಂದೆನು I ಸಮರಕ್ಕೆರಗಿದರೂ ನಾ ಭರವಸೆಯಿಂದಿರುವೆನು II</verse>
				<verse number="4">ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ: I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II</verse>
				<verse number="5">ಕೇಡುಕಾಲದಲ್ಲಿ ಅವಿತಿಸಿಡುವನು ನನ್ನನ್ನು ತನ್ನ ಗುಡಾರದಲಿ I ಇರಿಸುವನು ಮರೆಯಾಗಿ ಗರ್ಭಗುಡಿಯಲಿ, ಸುರಕ್ಷಿತ ಶಿಖರದಲಿ II</verse>
				<verse number="6">ಸುತ್ತಲು ನೆರೆದಿಹ ಶತ್ರುಗಳ ನಡುವೆ ತಲೆಯೆತ್ತಿ ನಡೆವೆನು I ದೇವಾಲಯದೊಳು ಜಯಜಯ ಘೋಷದೊಡನೆ ಬಲಿಗಳನರ್ಪಿಸುವೆನು I ಪ್ರಭುವಿಗೆ ಹಾಡುವೆನು, ವಾದ್ಯ ನುಡಿಸುತ ಕೊಂಡಾಡುವೆನು II</verse>
				<verse number="7">ಪ್ರಭೂ, ನಿನಗೆ ಮೊರೆಯಿಡುವೆನು I ಕರುಣಿಸೆನಗೆ ಸದುತ್ತರವನು II</verse>
				<verse number="8">“ಅರಸೆನ್ನ ಮುಖದರುಶನವನು\, ಎಂದೆ ನೀನು I “ಅರಸುವೆನು ಅದನೆ\, ಎಂದು ಮರುನುಡಿದೆ ನಾನು II</verse>
				<verse number="9">ವಿಮುಖನಾಗಬೇಡ ಪ್ರಭು, ಕೋಪದಿಂದೆನ್ನ ತಳ್ಳಬೇಡಯ್ಯಾ I ರಕ್ಷಕದೇವಾ, ಎನಗೆ ಸಹಾಯಕಾ, ದಾಸನ ಕೈಬಿಡಬೇಡಯ್ಯಾ II</verse>
				<verse number="10">ಹೆತ್ತವರು ತೊರೆದುಬಿಟ್ಟರೇನು I ಕರ್ತನು ಪೊರೆಯದಿರನು ನನ್ನನು II</verse>
				<verse number="11">ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು I ಶತ್ರುರಹಿತ ಹಾದಿಯಲಿ ನಡೆಸು ಎನ್ನನು II</verse>
				<verse number="12">ತಳ್ಳಬೇಡೆನ್ನನು ವೈರಿಗಳ ವಶಕ್ಕೆ I ಸುಳ್ಳುಸಾಕ್ಷಿಗಳು, ಕ್ರೂರಿಗಳವರೆನಗೆ II</verse>
				<verse number="13">ಪ್ರಭುವಿನೊಳಿತನು ನಾ ಕಾಣುವೆ ಜೀವಲೋಕದೊಳು I ನಾನಿಟ್ಟಿರುವೆ ನಂಬಿಕೆ ನಿರೀಕ್ಷೆ ಅದರೊಳು II</verse>
				<verse number="14">ಪ್ರಭುವನು ಎದುರುನೋಡುತ್ತಿರು ಮನವೇ I ಧೈರ್ಯದಿಂದ ನಿರೀಕ್ಷಿಸುತ್ತಿರು ಎದೆಗುಂದದೆ II</verse>
			</chapter>
			<chapter number="28">
				<verse number="1">ನನ್ನ ಮೊರೆ ಕೇಳು ಪ್ರಭು, ದುರ್ಗ ನೀನೆನಗೆ I ನೀ ಕಿವಿಗೊಡದಿರೆ, ನಾ ಸಮಾನ ಸತ್ತವರಿಗೆ II</verse>
				<verse number="2">ನಿನ್ನ ಪರಿಶುದ್ಧಾಲಯದತ್ತ ಕೈಯೆತ್ತಿ ಮುಗಿವೆನು I ಕರುಣೆಯಿಂದಾಲಿಸು ಪ್ರಭು, ನನ್ನಾರ್ತ ಮನವಿಯನು II</verse>
				<verse number="3">ದುರುಳರೊಡನೆ ದೂಡಬೇಡ, ದುರ್ಜನರೊಡನೆ ವಿಸರ್ಜಿಸಬೇಡೆನ್ನನು I ಪರರಿಗವರು ನುಡಿವರು ಶಾಂತಿಯನು ಉದರದಲ್ಲಿಡುವರು ಕ್ರೋಧವನು II</verse>
				<verse number="4">ಕೇಡಿಗರು ಪರರಿಗೆ ಮಾಡಿದುದ ತಾವೇ ಉಣ್ಣಮಾಡು I ಅವರ ದುಷ್ಟಕಾರ್ಯಗಳಿಗೆ ತಕ್ಕುದಾದ ಶಿಕ್ಷೆ ನೀಡು II</verse>
				<verse number="5">ಅರಿಯರವರು ಪ್ರಭುವಿನ ಕಾರ್ಯಗಳನು, ಆತನ ಕೈಕೆಲಸಗಳನು I ಈ ಕಾರಣ ಕೆಡವಿಬಿಡುವನು ಪ್ರಭು, ಮರಳಿ ಏಳಬಿಡನವರನು II</verse>
				<verse number="6">ಪ್ರಭುವಿಗೆನ್ನ ಕೃತಜ್ಞತಾ ವಂದನೆ I ಆಲಿಸಿದನವನು ನನ್ನ ವಿಜ್ಞಾಪನೆ II</verse>
				<verse number="7">ಪ್ರಭುವೇ ಶಕ್ತಿ, ಎನಗೆ ರಕ್ಷೆ, ಎನ್ನೆದೆಯ ನಂಬುಗೆ I ಎನ್ನ ಮನಃಪೂರ್ವಕ ಕೀರ್ತನೆ, ಆತನಿತ್ತ ನೆರವಿಗೆ II</verse>
				<verse number="8">ಪ್ರಭುವೆ ತನ್ನ ಪ್ರಜೆಯ ಪ್ರಾಬಲ್ಯವು I ತನ್ನಭಿಷಿಕ್ತನಿಗೆ ಆಶ್ರಯ ದುರ್ಗವು II</verse>
				<verse number="9">ರಕ್ಷಿಸು ನಿನ್ನ ಪ್ರಜೆಯನು, ಆಶೀರ್ವದಿಸು ನಿನ್ನ ಜನರನು I ಕುರಿಗಾಹಿ ನೀನಾಗಿರು ಪ್ರಭೂ, ಹೊತ್ತು ಸಾಗಿಸು ಅವರನು II</verse>
			</chapter>
			<chapter number="29">
				<verse number="1">ಸುರಪುತ್ರರೇ, ಪ್ರಭುವಿನ ಸ್ತುತಿಮಾಡಿರಿ I ಬಲುಮೆ, ಮಹಿಮೆ, ಅವನದೇ ಎಂದು ಸಾರಿರಿ II</verse>
				<verse number="2">ಸ್ತುತಿಸಿರಿ ಆತನ ಶ್ರೀನಾಮ ಮಹಿಮೆಯನು I ಪೂಜಿಸಿರಿ ಪವಿತ್ರಾಂಬರರಾಗಿ ಆತನನು II</verse>
				<verse number="3">ಪ್ರಭು ಆಸೀನನು ಆಗಸದ ಜಲರಾಶಿಗಳ ಮೇಲೆ I ಪ್ರತಿಭಾಸ್ವರೂಪನಾದ ದೇವನಿದೋ, ಗುಡುಗುತ್ತಲೇ I ಆತನಾಡಂಬರ ಧ್ವನಿ ಮೇಘಮಂಡಲದ ಮೇಲೆ II</verse>
				<verse number="4">ಪ್ರಭುವಿನ ಧ್ವನಿ ಶಕ್ತಿಯುತ I ಆತನ ಶಬ್ಧ ವೈಭವಯುತ II</verse>
				<verse number="5">ಆತನ ಗರ್ಜನೆಗೆ ಮುರಿದುಬೀಳುವುವು ದೇವದಾರು ಮರಗಳು I ಹೌದ್ಹೌದು, ಸೀಳಿ ಹೋಳಾಗುವುವು ಲೆಬನೋನಿನ ಮಹಾ ವೃಕ್ಷಗಳು II</verse>
				<verse number="6">ಜಿಗಿಯುವುದು ಲೆಬನೋನ್ ಪರ್ವತ ಎಳೆಗರುವಿನಂತೆ I ನೆಗೆಯುವುದು ಗಿರಿ ಸಿಯೋನ್ ಕಾಡೆಮ್ಮೆಯ ಕರುವಂತೆ II</verse>
				<verse number="7">ಆತನ ಮಹಾ ಗರ್ಜನೆಗೆ ಥಳಥಳಿಸುವುವು ಕೋಲ್ಮಿಂಚುಗಳು I ಕಂಪಿಸುವುದು ಕಾದೇಶ ಅರಣ್ಯ, ಕದಲುವುವು ಕಾಡುಮೇಡುಗಳು II</verse>
				<verse number="8"></verse>
				<verse number="9">ಈಯುವುವು ಜಿಂಕೆಗಳು, ನಗ್ನವಾಗುವುವು ವೃಕ್ಷಗಳು I ಜಯಜಯ ಘೋಷಮಾಡುವರೆಲ್ಲರು ಆತನಾಲಯದೊಳು II</verse>
				<verse number="10">ಜಲಪ್ರಳಯದೊಳು ಪ್ರಭು ಆಸೀನನಾಗಿಹನು I ಯುಗಯುಗಾಂತರಕು ಅರಸನಾಗಿ ಆಳುವನು II</verse>
				<verse number="11">ಅನುಗ್ರಹಿಸಲಿ ಪ್ರಭು ತನ್ನ ಜನರಿಗೆ‍ ಶಕ್ತಿಯನು I ದಯಪಾಲಿಸಲಿ ತನ್ನ ಪ್ರಜೆಗೆ ಸುಕ್ಷೇಮವನು II</verse>
			</chapter>
			<chapter number="30">
				<verse number="1">ನಿನಗೆನ್ನ ವಂದನೆ ಪ್ರಭು, ನನ್ನನುದ್ಧರಿಸಿದೆ I ಶತ್ರುಗಳೆನ್ನ ಕುರಿತು ಹಿಗ್ಗದಂತೆ ಮಾಡಿದೆ II</verse>
				<verse number="2">‘ಹೇ ಪ್ರಭು, ಎನ್ನ ದೇವಾ ‘ ಎಂದೆ I ನಾ ಮೊರೆಯಿಡೆ, ನೀ ಗುಣಪಡಿಸಿದೆ II</verse>
				<verse number="3">ಪಾತಾಳದಿಂದೆನ್ನ ಪ್ರಾಣವನು ಮೇಲೆತ್ತಿದೆ I ಎನ್ನ ಬದುಕಿಸಿದೆ ದೇವಾ, ಸಮಾಧಿ ಸೇರಗೊಡದೆ II</verse>
				<verse number="4">ಭಕ್ತರೇ, ಸಂಕೀರ್ತಿಸಿರಿ ಪ್ರಭುವನು I ಮಾಡಿರಿ ಆತನ ನಾಮಸ್ಮರಣೆಯನು II</verse>
				<verse number="5">ಆತನ ಕೋಪ ಕ್ಷಣಮಾತ್ರ I ಆತನ ಕೃಪೆ ಜೀವನ ಪರಿಯಂತ II ಇರುಳು ಬರಲು ಇರಬಹುದು ಅಳಲು I ನಲಿವು ಉಲಿವುದು ಹಗಲು ಹರಿಯಲು II</verse>
				<verse number="6">ನಾನಾದರೋ ಉಲ್ಲಾಸದಿಂದಿರುವಾಗಲೂ I ನನ್ನನು ಅಲ್ಲಾಡಿಸಲಾಗದೆಂದೆ ಯಾರಿಂದಲೂ II</verse>
				<verse number="7">ಪ್ರಭು, ನಿನ್ನ ಕೃಪೆ ನನ್ನ ಗುಡ್ಡಕ್ಕೆ ಅಡಿಬಂಡೆ I ನಿನ್ನ ಮುಖ ಮರೆಯಾದುದೆ ನಾ ಕಳವಳಗೊಂಡೆ II</verse>
				<verse number="8">ಹೇ ಪ್ರಭು, ಮೊರೆಯಿಟ್ಟೆನು ನಿನಗೆ I ಬಿನ್ನವಿಸಿದೆನು ನನ್ನೊಡೆಯನಿಗೆ II</verse>
				<verse number="9">“ನನ್ನ ಪ್ರಾಣ ನಷ್ಟದಿಂದ ನಿನಗೇನು ಫಲ? I ಸಮಾಧಿಗೆ ನಾನಿಳಿದರೆ ನಿನಗೇನು ಲಾಭ?” II “ಸತ್ತವರ ಬೂದಿ ನಿನ್ನ ಸ್ತುತಿಸಬಲ್ಲುದೆ? I ನಿನ್ನ ಸತ್ಯತೆಯನ್ನದು ಸಾರಲು ಬಲ್ಲುದೆ?” II</verse>
				<verse number="10">“ಆಲಿಸು ಪ್ರಭು, ಕರುಣಿಸು, ನೆರವಾಗು ಬೇಗ” I ಎಂದು ಪ್ರಭು ನಾನಿನ್ನನು ಪ್ರಾರ್ಥಿಸಿದಾಗ II</verse>
				<verse number="11">ಎನ್ನ ಗೋಳಾಟವನು ನೀ ಕುಣಿದಾಟವಾಗಿಸಿದೆ I ಎನ್ನ ಗೋಣಿತಟ್ಟನು ಹರ್ಷಾಭರಣವಾಗಿಸಿದೆ II</verse>
				<verse number="12">ಎಂದೇ ಮೌನವಿರದೆ ಎನ್ನ ಮನವು ನಿನಗೆ ಹಾಡಲಿ ಕೀರ್ತನೆ I ಹೇ ಪ್ರಭು, ಎನ್ನ ದೇವ, ನಿನಗೆನ್ನ ಅನಂತ ಧನ್ಯ ವಂದನೆ II</verse>
			</chapter>
			<chapter number="31">
				<verse number="1">ಎನ್ನನುದ್ಧರಿಸು ಪ್ರಭು, ನಿನ್ನ ನೀತಿಗನುಸಾರ I ನಿನ್ನ ಶರಣನಾದೆ, ನನಗಾಗದಿರಲಿ ತಾತ್ಸಾರ II</verse>
				<verse number="2">ನನಗೆ ಕಿವಿಗೊಡು ಪ್ರಭು, ನನ್ನನು ಬಿಡಿಸು ಬೇಗನೆ I ನನ್ನಾಶ್ರಯಗಿರಿ, ದುರ್ಗಸ್ಥಾನವಾಗಿರು ನೀನೆ II</verse>
				<verse number="3">ಕೈ ಹಿಡಿದು ನಡೆಸೆನ್ನನು ನಿನ್ನ ನಾಮ ನಿಮಿತ್ತ I ನೀನೆನಗೆ ಪೊರೆಬಂಡೆ, ಸ್ಥಿರ ಕೋಟೆಕೊತ್ತಲ II</verse>
				<verse number="4">ವೈರಿಗಳ ಉರುಲುಬಂಡೆಯಿಂದೆನ್ನನು ರಕ್ಷಿಸು I ಅದರಲಿ ನಾ ಸಿಕ್ಕಿ ಬೀಳುವುದನು ತಪ್ಪಿಸು II</verse>
				<verse number="5">ನನಗಾಧಾರ ನೀನಲ್ಲವೆ? ನನ್ನಾತ್ಮವನು ನಿನಗೊಪ್ಪಿಸಿರುವೆ I ನಂಬಿಕಸ್ತನಾದ ದೇವನೆ, ನೀಯೆನ್ನ ಮುಕ್ತಗೊಳಿಸಿರುವೆ II</verse>
				<verse number="6">ಇಲ್ಲಸಲ್ಲದ ದೇವರನು ಅವಲಂಬಿಪರನು ನೀ ಒಲ್ಲೆ I ನಾನಾದರೋ ಪ್ರಭು, ಭರವಸೆಯಿಟ್ಟಿರುವುದು ನಿನ್ನಲ್ಲೆ II</verse>
				<verse number="7">ಹರ್ಷಾನಂದಗೊಳ್ಳುವೆ ನೆನೆದು ನಿನ್ನ ಅನಂತ ಪ್ರೀತಿಯನು I ಈಕ್ಷಿಸಿದೆ ನೀ ಭಕ್ತನ ದೀನತೆಯನು, ಲಕ್ಷಿಸಿದೆ ಬಾಧೆಗಳನು II</verse>
				<verse number="8">ವಿರೋಧಿಗಳ ವಶಕ್ಕೆ ಎನ್ನನು ನೀ ಬಿಟ್ಟುಬಿಡಲಿಲ್ಲ I ನಿರಾತಂಕದೆಡೆಯಲಿ ನನ್ನ ನಿಲ್ಲಿಸಿದೆಯಲ್ಲಾ II</verse>
				<verse number="9">ಸಂಕಟದಲಿ ನಾ ಸಿಲುಕಿಕೊಂಡಿರುವೆ I ಕಣ್ಣುಗುಡ್ಡೆಗಳಿದೋ ಸೇದಿಹೋಗಿವೆ I ದೇಹಾತ್ಮಗಳೆರಡು ಕುಗ್ಗಿಹೋಗಿವೆ II</verse>
				<verse number="10">ಕರಗುತ್ತಿದೆ ಬದುಕು ತಾಪದಲಿ; ಕುಂದುತ್ತಿದೆ ಶಕ್ತಿ ಪಾಪದಲಿ I ಸವೆದು ಹೋಗುತ್ತಿವೆ ನನ್ನ ದೇಹದೆಲುಬುಗಳು ಕಾಲ ಚಕ್ರದಲಿ II</verse>
				<verse number="11">ಶತ್ರುಗಳ ದೂಷಣೆಗೆ ಗುರಿಯಾದೆ, ನೆರೆಯವರಿಗೆ ನಿಂದಾಸ್ಪದನಾದೆ I ಮಿತ್ರರೂ ಬೆದರುವಂತಾದೆ; ದಾರಿಹೋಕರು ದೂರವಾಗುವಂತಾದೆ II</verse>
				<verse number="12">ನುಚ್ಚುನೂರಾದೆ, ಮಡಕೆಚಿಪ್ಪಿನಂತಾದೆ I ಸತ್ತವರಂತಾದೆ: ನೆನಪಿಗೆ ಬಾರದಾದೆ II</verse>
				<verse number="13">ನನಗೆ ವಿರುದ್ಧ ಜನರಾಡುವ ಗುಸುಗುಸು ಮಾತು ಕೇಳಿ ಬರುತಿದೆ I ಭಯಭೀತಿ ಎನ್ನನಾವರಿಸಿದೆ, ಒಳಸಂಚು, ಪ್ರಾಣಹರಣ ನಡೆಯುತಿವೆ II</verse>
				<verse number="14">ನಾನಾದರೋ ಪ್ರಭೂ, ನಿನ್ನಲೆ ಭರವಸೆಯಿಟ್ಟಿರುವೆ I ನೀನೆ ನನ್ನ ದೇವರೆಂದು ಪ್ರಭು ಸಾರುವೆ II</verse>
				<verse number="15">ನಿನ್ನ ಕೈಯಲ್ಲಿದೆ ನನ್ನ ಇಡೀ ಜೀವಮಾನ I ಬೆನ್ನಟ್ಟಿಬರುವ ವೈರಿಯಿಂದ ರಕ್ಷಿಸೆನ್ನ II</verse>
				<verse number="16">ಬೆಳಗಿಸಲಿ ದಾಸನನು ನಿನ್ನ ಮುಖತೇಜವು I ಕಾಪಾಡಲಿ ಎನ್ನನು ನಿನ್ನನಂತ ಪ್ರೇಮವು II</verse>
				<verse number="17">ನಿನಗೆ ಮೊರೆಯಿಡುವೆ, ನನಗಾಗದಿರಲಿ ಹೇ ಪ್ರಭು, ಮಾನಭಂಗ I ದುರುಳರಿಗಾಗಲೀ ಆಶಾಭಂಗ, ಮೂಕರಾಗವರು ಸೇರಲಿ ನರಕ II</verse>
				<verse number="18">ಸೇದಿಹೋಗಲಿ ಸಜ್ಜನರ ವಿರುದ್ಧ ಸುಳ್ಳಾಡುವ ನಾಲಿಗೆ I ಬಿದ್ದುಹೋಗಲಿ, ಸೊಕ್ಕಿನಿಂದವರನು ಧಿಕ್ಕರಿಸುವ ನಾಲಿಗೆ II</verse>
				<verse number="19">ನಿನಗಂಜಿ ನಡೆವರಿಗೆ ನೀ ಕಟ್ಟಿಟ್ಟಿರುವ ಬುತ್ತಿ ಅದೆಷ್ಟು ಅಗಾಧ I ನಿನ್ನ ನಂಬಿದವರಿಗೆ ಬಟ್ಟ ಬಯಲಾಗಿ ನೀಡುವ ನೆರವದೆಷ್ಟು ಅಪಾರ II</verse>
				<verse number="20">ಪಾರುಮಾಡುವುದವರನು ನಿನ್ನ ಸಾನ್ನಿಧ್ಯ ಸೆರಗು, ಜನರೊಳಸಂಚಿನಿಂದ I ದೂರವಿಡುವುದವರನು ನಿನ್ನಾಸರೆಯು, ವ್ಯಾಜ್ಯಮಾಡುವ ಜಿಹ್ವೆಯಿಂದ II</verse>
				<verse number="21">ಮುತ್ತಿಗೆಗೆ ತುತ್ತಾದ ನಗರದೊಳಿಂದೆನ್ನ I ಅಚ್ಚರಿಯಿಂದ ರಕ್ಷಿಸಿದೊಡೆಯನಿಗೆ ನಮನ II</verse>
				<verse number="22">ದೇವರಿಂದ ದೂರನಾದೆಯೆಂಬ ದಿಗಿಲೇರಲು I ಅಕ್ಕರೆಯಿಂದ ನೀ ಕಿವಿಗೊಟ್ಟೆ ನಾ ಮೊರೆಯಿಡಲು II</verse>
				<verse number="23">ಪ್ರಭುವಿನ ಭಕ್ತರೇ, ಪ್ರೀತಿಸಿ ನೀವಾತನನು ಅಧಿಕಾಧಿಕವಾಗಿ I ಶರಣರನು ರಕ್ಷಿಸಿ, ಸೊಕ್ಕಿನವರನು ಶಿಕ್ಷಿಸುವನಾತ ಸರಿಯಾಗಿ II</verse>
				<verse number="24">ಪ್ರಭುವಿಗಾಗಿ ಕಾದಿಹ ಜನರೆ, ನಿಮಗಿರಲಿ ಅಭಯ I ಧೈರ್ಯದಿಂದಿರಲಿ ನಿರುತ ನಿಮ್ಮೆಲ್ಲರ ಹೃದಯ II</verse>
			</chapter>
			<chapter number="32">
				<verse number="1">ಯಾರ ಪಾಪ ಪರಿಹಾರವಾಗಿದೆಯೋ I ಯಾರ ದ್ರೋಹ ವಿಮೋಚನೆಯಾಗಿದೆಯೋ - ಅವರೇ ಧನ್ಯರು II</verse>
				<verse number="2">ಯಾರಪರಾಧವನು ಪ್ರಭು ಎಣಿಸಿಲ್ಲವೋ I ಯಾರಂತರಂಗದಲಿ ಕುತಂತ್ರವಿಲ್ಲವೋ ಅವರೇ ಧನ್ಯರು II</verse>
				<verse number="3">ಪಾಪ ನಿವೇದನೆ ಮಾಡದೆ ನಾ ಮೌನದಿಂದಿರಲು I ದಿನವೆಲ್ಲ ನರಳಿ ಸವೆದುಹೋದವು ನನ್ನೆಲುಬುಗಳು II</verse>
				<verse number="4">ಪ್ರಭುವಿನ ಶಿಕ್ಷಾಹಸ್ತ ನನ್ನ ಮೇಲೆ ಭಾರವಾಗಿತ್ತು ಹಗಲಿರುಳು I ಬೇಸಿಗೆಯ ನೀರಿನಂತೆ ಬತ್ತಿಹೋಗಿತ್ತು ನನ್ನ ಶರೀರದ ತಿರುಳು II</verse>
				<verse number="5">ಆಗ ನಾ ನಿವೇದಿಸಿದೆ ನಿನಗೆ ನನ್ನ ಪಾಪವನು I ಮರೆಮಾಡಲಿಲ್ಲ ನಿನ್ನಿಂದ ನನ್ನ ದ್ರೋಹವನು II “ಪ್ರಭು ಮುಂದೆ ನನ್ನ ತಪ್ಪುಗಳನ್ನೊಪ್ಪಿಕೊಳ್ವೆ” ಎಂದೆನು I ಆಗ ನೀ ಪರಿಹರಿಸಿದೆ ನನ್ನ ಪಾಪದೋಷವನು II</verse>
				<verse number="6">ಎಂತಲೇ ಭಕ್ತರೆಲ್ಲರು ನಿನ್ನ ಪ್ರಾರ್ಥಿಸಲಿ ಸಕಾಲದಲಿ I ಹುಚ್ಚುಹೊಳೆ ಉಕ್ಕಿಬಂದಾಗ ನೀ ಸಿಕ್ಕಲಿಲ್ಲವೆನ್ನದಿರಲಿ II</verse>
				<verse number="7">ನೀನೆ ನನಗೆ ಮರೆಯು, ಆಪತ್ತಿನಲಾಸರೆಯು I ನನ್ನನು ಆವರಿಸುವ ಉದ್ಧಾರಕ ನಾದವು II</verse>
				<verse number="8">ಪ್ರಭು ಇಂತೆಂದನು: “ಕಲಿಸುವೆನು, ನಾ ನಿನಗೆ ತಿಳಿಸುವೆನು ಸನ್ಮಾರ್ಗವನು I ಕಟಾಕ್ಷಿಸಿ ನಿನ್ನನು, ಈವೆನು ಸದಾಲೋಚನೆಯನು II</verse>
				<verse number="9">‘ಬುದ್ಧಿಹೀನರಾಗದಿರಿ ಕತ್ತೆ, ಕುದುರೆಗಳಂತೆ I ಸ್ವಾಧೀನವಾಗವವು ಕಟ್ಟುಕಡಿವಾಣವಿಲ್ಲದೆ’ II</verse>
				<verse number="10">‘ದುಷ್ಟರ ಕಷ್ಟನಷ್ಟಗಳು ಅನೇಕ I ಪ್ರಭುವನು ನಂಬಿದವರ ಸುತ್ತ ಮರುಕ’ ” II</verse>
				<verse number="11">ಸಜ್ಜನರೇ ಸಂತೋಷಿಸಿರಿ, ಉಲ್ಲಾಸಿಸಿರಿ ಪ್ರಭುವಿನಲಿ I ಯಥಾರ್ಥಚಿತ್ತರೇ, ಜಯಕಾರಮಾಡಿ ಆತನ ವಿಷಯದಲಿ II</verse>
			</chapter>
			<chapter number="33">
				<verse number="1">ಸಜ್ಜನರೇ, ಮಾಡಿರಿ ಪ್ರಭುವಿನ ಗುಣಗಾನ I ನೀತಿವಂತರೇ, ಆತನ ಸ್ತುತಿ ನಿಮಗೆ ಸುಗುಣ II</verse>
				<verse number="2">ಪ್ರಭುವನು ಕೊಂಡಾಡಿ ಕಿನ್ನರಿಯನು ನುಡಿಸುತ I ಕೀರ್ತಿಸಿ ದಶತಂತಿ ವೀಣೆಯನು ಬಾರಿಸುತ II</verse>
				<verse number="3">ನೂತನ ಕೀರ್ತನೆಯನು ಆತನಿಗೆ ಹಾಡಿರಿ I ಇಂಪಾಗಿ ಬಾರಿಸಿ, ಸೊಂಪಾಗಿ ಭಜಿಸಿರಿ II</verse>
				<verse number="4">ಸತ್ಯವಾದುದು ಆತನ ಪವಿತ್ರ ವಾಕ್ಯ I ಸ್ತುತ್ಯವಾದುದು ಆತನ ಪುನೀತ ಕಾರ್ಯ II</verse>
				<verse number="5">ಸತ್ಯಸಂಧನು, ನ್ಯಾಯಪ್ರಿಯನು ಆತನು I ಅಚಲಪ್ರೀತಿಯಿಂದ ಜಗವನು ತುಂಬಿಹನು II</verse>
				<verse number="6">ಸೃಷ್ಟಿಯಾಯಿತು ಗಗನ ಮಂಡಲ ಆತನ ನುಡಿಯೊಂದಕೆ I ರೂಪುಗೊಂಡಿತು ತಾರಾ ಮಂಡಲ ಅವನುಸಿರು ಮಾತ್ರಕೆ II</verse>
				<verse number="7">ತುಂಬಿಟ್ಟಿಹನು ಜಲರಾಶಿಗಳನು ಕಡಲೆಂಬ ಕುಡಿಕೆಯಲಿ I ಕೂಡಿಟ್ಟಿಹನು ಜಲಾಶಯಗಳನು ಬುವಿಯುಗ್ರಾಣದಲಿ II</verse>
				<verse number="8">ಪೊಡವಿಯೆಲ್ಲವು ಭಯಪಡಲಿ ಪ್ರಭುವಿಗೆ I ಅಡಗಿ ನಡೆಯಲಿ ನಾಡಿಗರೆಲ್ಲ ಆತನಿಗೆ II</verse>
				<verse number="9">ಸೃಷ್ಟಿಯಾಯಿತು ಆತನ ನುಡಿ ಮಾತ್ರಕೆ I ಸ್ಥಾಪನೆಯಾಯಿತು ಅವನ ಅಣತಿಯೊಂದಕೆ II</verse>
				<verse number="10">ವ್ಯರ್ಥವಾಗಿಪನು ಪ್ರಭು ರಾಷ್ಟ್ರಯೋಜನೆಗಳನು I ನಿರರ್ಥಕವಾಗಿಪನು ಜನರ ದುಷ್ಟಸಂಕಲ್ಪಗಳನು II</verse>
				<verse number="11">ಪ್ರಭುವಿನ ಯೋಜನೆ ಶಾಶ್ವತ I ಅವನ ಸಂಕಲ್ಪ ಅನವರತ II</verse>
				<verse number="12">ಪ್ರಭುವನು ದೇವರಾಗಿ ಪಡೆದ ಜನಾಂಗ ಧನ್ಯ I ಸ್ವಜನರಾಗಿ ಆತನಾಯ್ದುಕೊಂಡ ಜನತೆ ಧನ್ಯ II</verse>
				<verse number="13">ವೀಕ್ಷಿಸುತಿಹನು ಪ್ರಭು ಸಮಸ್ತವನು ಪರದಿಂದ I ಲಕ್ಷಿಸುತಿಹನು ಮನುಜರನು ಸಿಂಹಾಸನದಿಂದ II</verse>
				<verse number="14">ಸ್ಥಾವರ ಸಿಂಹಾಸನದಿಂದ ನೋಡುತಿಹನು I ಸರ್ವ ಭೂನಿವಾಸಿಗಳನು ಪರಿಶೀಲಿಸುತಿಹನು II</verse>
				<verse number="15">ಅವರೆಲ್ಲರ ಹೃದಯಗಳನು ನಿರ್ಮಿಸಿದಾತನವನು I ಅವರವರ ಕೃತ್ಯಗಳನು ಪರೀಕ್ಷಿಸುತಿಹನು II</verse>
				<verse number="16">ಅರಸನಾವನು ವಿಜೇತನಾಗನು ಮಹಾ ಸೇನಾಬಲದಿಂದಲೆ I ಶೂರನಾವನು ಜಯಶೀಲನಾಗನು ಕೇವಲ ಭುಜಬಲದಿಂದಲೆ II</verse>
				<verse number="17">ಪ್ರಾಣರಕ್ಷಣೆಗೆ ಸಾಲದು ಅಶ್ವದಳ I ಆತ್ಮರಕ್ಷಣೆಗೆ ಬಾರದು ಅಶ್ವಬಲ II</verse>
				<verse number="18">ಪ್ರಭುವಾದರೋ ಕಟಾಕ್ಷಿಸುವನು ತನಗಂಜಿ ನಡೆದವರನು I ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು II</verse>
				<verse number="19">ತಪ್ಪಿಸುವನವನು ಪ್ರಾಣವನು ಮರಣದಿಂದ I ಉಳಿಸುವನು ಜೀವವನು ಕ್ಷಾಮಡಾಮರದಿಂದ II</verse>
				<verse number="20">ಕಾದಿದೆ ಎನ್ನ ಮನ ಪ್ರಭುವಿಗಾಗಿ I ಆತನಿಹನು ಎನಗೆ ಗುರಾಣಿಯಾಗಿ II</verse>
				<verse number="21">ನೆಮ್ಮದಿಯಿಂದಿದೆ ಎನ್ನ ಮನ ಆತನಲಿ I ನಂಬಿರುವೆವು ಆತನ ಶ್ರೀ ನಾಮದಲಿ II</verse>
				<verse number="22">ನಮ್ಮ ಮೇಲಿರಲಿ ಪ್ರಭು, ನಿನ್ನಚಲ ಪ್ರೀತಿ I ಕಾದಿಹೆವು ಇದೋ ನಿನ್ನ ನಂಬಿ ಭರವಸದಿ II</verse>
			</chapter>
			<chapter number="34">
				<verse number="1">ಪ್ರಭುವನು ನಾ ಕೊಂಡಾಡುವೆ ಎಲ್ಲ ಕಾಲದೊಳು I ಆತನ ಸ್ತುತಿ ಸದಾ ಇಹುದು ನನ್ನ ಬಾಯೊಳು II</verse>
				<verse number="2">ಪ್ರಭುವಿನಲ್ಲಿದೆ ನನ್ನ ಮನದಭಿಮಾನ I ದೀನರಿದನು ಕೇಳಿ, ಪಡೆಯಲಿ ಸುಮ್ಮಾನ I</verse>
				<verse number="3">ಬನ್ನಿ, ಕೊಂಡಾಡುವ ಪ್ರಭು ದೇವನನು II ಘನಪಡಿಸೋಣ ಅವನ ಶ್ರೀನಾಮವನು II</verse>
				<verse number="4">ಬೇಡಿಕೊಳ್ಳಲು ಕೊಟ್ಟನಾತ ಸದುತ್ತರವನು I ಭಯಭೀತಿಯಿಂದೆನ್ನನು ಮುಕ್ತನಾಗಿಸಿಹನು II</verse>
				<verse number="5">ಆತನತ್ತ ತಿರುಗಿದ ಮುಖ ಅರಳುವುದು I ಲಜ್ಜೆಯಿಂದೆಂದಿಗು ಕುಂದಿಹೋಗದು II</verse>
				<verse number="6">ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು I ಸರ್ವಾಪತ್ತಿನಿಂದವನು ಮುಕ್ತಗೊಂಡನು II</verse>
				<verse number="7">ಭಯಭಕುತಿಯುಳ್ಳವರ ಸುತ್ತಲು ಕಾವಲಿದ್ದು I ಕಾಯುವನು ಪ್ರಭುವಿನ ದೂತನೆ ಬಂದಿಳಿದು II</verse>
				<verse number="8">ಸವಿದು ನೋಡು ಪ್ರಭುವಿನ ಮಾಧುರ್ಯವನು I ಆತನನು ಆಶ್ರಯಿಸಿಕೊಂಡವನು ಧನ್ಯನು II</verse>
				<verse number="9">ದೇವಜನರೆ, ನಿಮಗಿರಲಿ ಪ್ರಭುವಿನ ಭಯಭಕುತಿ I ಅಂಥವರಿಗಿರದು ಯಾವ ಕುಂದುಕೊರತೆಯ ಭೀತಿ II</verse>
				<verse number="10">ಯುವ ಕೇಸರಿಗೆ ಇರಬಹುದು ಹಸಿವು, ದಾಹ I ಪ್ರಭುವನು ಅರಸುವವರಿಗಿರದು ಒಳಿತಿನ ಅಭಾವ II</verse>
				<verse number="11">ಬನ್ನಿ ಮಿತ್ರರೇ, ಆಲಿಸಿರೀ ಮಾತನು I ಕಲಿಸುವೆನು ನಾ ನಿಮಗೆ ದೇವ ಭಯವನು II</verse>
				<verse number="12">ಎಲೆ ಮಾನವ, ಬಲುದಿನ ಬಾಳಲು ಬಯಸುವೆಯಾ? I ಆಯುರಾರೋಗ್ಯ ಭಾಗ್ಯವನು ಆಶಿಸುವೆಯಾ? II</verse>
				<verse number="13">ಕಾದಿಡು ನಾಲಿಗೆಯನು ಕೇಡನು ಆಡದಂತೆ I ಬಿಗಿಯಿಡು ತುಟಿಯನ್ನು ಕುಟಿಲವನು ನುಡಿಯದಂತೆ II</verse>
				<verse number="14">ಬಿಡು ಕೆಟ್ಟದನು, ಮಾಡು ಒಳ್ಳಿತನು I ಹುಡುಕು ಶಾಂತಿಯನು, ಬೆನ್ನಟ್ಟು ಅದನು II</verse>
				<verse number="15">ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II</verse>
				<verse number="16">ದುರ್ಜನರಿಗಾದರೋ ಪ್ರಭು ವಿಮುಖನು I ಅವರ ಹೆಸರನು ಧರೆಯಿಂದ ಅಳಿಸುವನು II</verse>
				<verse number="17">ಕಿವಿಗೊಡುವನು ಪ್ರಭು ಸಜ್ಜನರ ಮೊರೆಗೆ I ನೆರವೀವನವರ ಕಷ್ಟನಿವಾರಣೆಗೆ II</verse>
				<verse number="18">ಸನಿಹದಲ್ಲಿಹನು ಪ್ರಭು ಭಗ್ನ ಹೃದಯಿಗಳಿಗೆ I ಉದ್ಧಾರಕನಾತನು ಮನಸ್ಸು ಕುಗ್ಗಿದವರಿಗೆ II</verse>
				<verse number="19">ಸಜ್ಜನನಿಗೊದಗುವ ಸಂಕಟಗಳು ವಿಪರೀತ I ಪ್ರಭುವೆಲ್ಲವನು ನಿವಾರಿಸುವುದು ನಿಶ್ಚಿತ II</verse>
				<verse number="20">ಕಾಪಾಡುವನು ಅವನೆಲಬುಗಳೆಲ್ಲವನ್ನೂ I ಮುರಿಯಬಿಡನು ಪ್ರಭು ಅವುಗಳಲ್ಲೊಂದನ್ನೂ II</verse>
				<verse number="21">ದುರ್ಜನರೆಲ್ಲರೂ ತುತ್ತಾಗುವರು ತಮ್ಮ ಕೇಡಿಗೆ I ಸಜ್ಜನರ ಶತ್ರುಗಳು ಗುರಿಯಾಗುವರು ದಂಡನೆಗೆ II</verse>
				<verse number="22">ತನ್ನ ದಾಸರನು ಉದ್ಧಾರಮಾಡದಿರನು ಪ್ರಭು I ತನ್ನ ಶರಣರೊಳೊಬ್ಬರನು ದಂಡಿಸನಾ ವಿಭು II</verse>
			</chapter>
			<chapter number="35">
				<verse number="1">ನನ್ನೊಡನೆ ವ್ಯಾಜ್ಯ ಮಾಡುವವರೊಡನೆ ವ್ಯಾಜ್ಯ ಮಾಡು I ನನ್ನೊಡನೆ ಕದನ ಮಾಡುವವರೊಡನೆ ಪ್ರಭು, ಕದನ ಮಾಡು</verse>
				<verse number="2">ಖಡ್ಗ ಗುರಾಣಿಗಳನು ಧರಿಸಿಕೊ I ನನಗೆ ರಕ್ಷಣೆಯಾಗಿ ನಿಂತುಕೊ II</verse>
				<verse number="3">ತಡೆ ನೀನು ಬಿಲ್ಲು ಬರ್ಜಿಯಿಂದ ಬೆನ್ನಟ್ಟಿಬರುವ ವೈರಿಯನು I ನೀಡೆನ್ನ ಮನಕೆ, ನೀನೆ ರಕ್ಷಕನೆಂಬ ಅಭಯವನು II</verse>
				<verse number="4">ನನ್ನ ಕೊಲೆಗೆ ಯತ್ನಿಸುವವನು ತಲೆ ತಗ್ಗಿಸಲಿ ನಿರಾಶೆಗೊಂಡು I ನನಗೆ ಕೇಡನು ಮಾಡುವವರು ಓಡಿಹೋಗಲಿ ಗಲಿಬಿಲಿಗೊಂಡು II</verse>
				<verse number="5">ಬಿರುಗಾಳಿಗೆ ತರಗೆಲೆಯಂತೆ ತೂರಿಹೋಗಲಿ I ಪ್ರಭುವಿನ ದೂತನವರನು ಬೆನ್ನಟ್ಟಿ ಹೋಗಲಿ II</verse>
				<verse number="6">ಇಳಿಜಾರು, ಕಾರಿರುಳು ಇರುವ ಹಾದಿಯಲಿ I ಪ್ರಭುವಿನ ದೂತನವರನು ಓಡಿಸಿಬಿಡಲಿ II</verse>
				<verse number="7">ನಿಷ್ಕಾರಣ ಕೊಲೆಮಾಡಲೆನ್ನ ಬಲೆಯೊಡ್ಡಿಹರು I ಆ ಕಾರಣ ಪ್ರಾಣ ತೆಗೆಯಲು ಗುಂಡಿ ತೋಡಿಹರು II</verse>
				<verse number="8">ಒಡ್ಡಿದ ಬಲೆಯಲಿ ಒಡ್ಡಿದವನೇ ಪಟಕ್ಕನೆ ಸಿಕ್ಕಿಬೀಳಲಿ I ತೋಡಿದ ಗುಣಿಯಲಿ ತೋಡಿದವನೇ ತಟಕ್ಕನೆ ಬಿದ್ದುಹೋಗಲಿ II</verse>
				<verse number="9">ಆಗೆನ್ನ ಮನವು ಆನಂದಗೊಳ್ಳುವುದು ಪ್ರಭುವಿನಲಿ I ಆಹ್ಲಾದಗೊಳ್ಳುವುದು ಆತನಿತ್ತಾ ರಕ್ಷಣೆಯಲಿ II</verse>
				<verse number="10">“ಬಿಡಿಸಿದೆ ಬಡವನನು ದರೋಡೆಗಾರರಿಂದ I ರಕ್ಷಿಸಿದೆ ದುರ್ಬಲನನು ಬಲಾಢ್ಯರಿಂದ I ಹೇ ಪ್ರಭು, ನಿನಗೆ ಸಮಾನರಾರೆಂದು” I ಹೊಗಳುವುವು ನನ್ನೆಲುಬುಗಳೊಂದೊಂದು II</verse>
				<verse number="11">ಸುಳ್ಳುಸಾಕ್ಷಿಗಳೆದ್ದಿಹರು ನನಗೆ ವಿರುದ್ಧ I ಹೊರಿಸುತಿಹರು ನನಗೇ ತಿಳಿಯದ ಅಪರಾಧ II</verse>
				<verse number="12">ಎಸಗುತಿಹರು ಉಪಕಾರಕೆ ಅಪಕಾರ I ಮಾಡಿಹರೆನ್ನನು ನಿರ್ಗತಿಕ ಪಿಂಜಾರ II</verse>
				<verse number="13">ಅವರು ಅಸ್ವಸ್ಥರಾಗಿರಲು ಶೋಕವಸ್ತ್ರಧಾರಿಯಾದೆ I ತಲೆಬಾಗಿ ಜಪಿಸಿದೆ, ನಾ ಮನನೊಂದು ಉಪವಾಸವಿದ್ದೆ II</verse>
				<verse number="14">ಶೋಕತಪ್ತನಾದೆ ಗೆಳೆಯನಿಗೊ ಬಳಗದವನಿಗೊ ಎಂಬಂತೆ I ಅತ್ತು ಪ್ರಲಾಪಿಸಿದೆ ತಾಯನು ಕಳೆದುಕೊಂಡ ತಬ್ಬಲಿಯಂತೆ II</verse>
				<verse number="15">ನನಗೆ ಆಪತ್ತೊದಗಲದೊ ಸಂತೋಷಿಸಿದರು ಸಭೆಗೂಡಿ I ಸೂರೆಮಾಡಿದರು ತಿರುತಿರುಗಿ ಆ ಭ್ರಷ್ಟರೊಟ್ಟುಗೂಡಿ II</verse>
				<verse number="16">ಅಣಕಿಸಿ ಹಾಸ್ಯಮಾಡಿದರು ಕೀಟಲೆಗಾರರಂತೆ I ಕಟಕಟನೆ ಹಲ್ಲುಕಡಿದರು ಕಡುಕೋಪಿಗಳಂತೆ II</verse>
				<verse number="17">ಇನ್ನೆಷ್ಟರವರೆಗೆ ಪ್ರಭು, ನೀ ಸುಮ್ಮನಿರುವೆ ನೋಡುತ? I ಬಿಡಿಸೆನ್ನ ಹಾವಳಿಯಿಂದ, ಸಿಂಹಗಳ ಬಾಯಿಂದ II</verse>
				<verse number="18">ಮಹಾಸಭೆಯಲ್ಲಾಗ ನಿನ್ನನು ಕೊಂಡಾಡುವೆ I ಬಹುಜನರ ಮುಂದೆ ನಿನ್ನ ಗುಣಗಾನ ಮಾಡುವೆ II</verse>
				<verse number="19">ಕಳ್ಳ ವೈರಿಗಳೆನ್ನ ನೋಡಿ ಹಿಗ್ಗಲು ಬಿಡಬೇಡ I ಈ ಕಾರಣ ಶತ್ರುಗಳು ಕಣ್ಣು ಮಿಟುಕಿಸುವುದು ಬೇಡ II</verse>
				<verse number="20">ಸಮಾಧಾನಕರವಲ್ಲ ಅವರಾಡುವ ನುಡಿಗಳು I ಮುಗ್ಧನಾಡಿಗರನು ಮೋಸಗೊಳಿಸುವಾ ಮಾತುಗಳು II</verse>
				<verse number="21">ಎನ್ನೀ ಪರಿಸ್ಥಿತಿಯನು ಕಂಡು ಅವರು ಬಾಯಿ ಕಿಸಿದು I ನುಡಿದರು, “ಆಹಾ! ಕಣ್ಣಾರೆ ಕಂಡೆವಲ್ಲಾ” ಎಂದು II</verse>
				<verse number="22">ನೀನೇ ನೋಡಿರುವೆ ಪ್ರಭು, ಇನ್ನು ಸುಮ್ಮನಿರಬೇಡ I ನನ್ನೊಡೆಯಾ, ನನಗಿನ್ನಾದರು ದೂರವಾಗಿರಬೇಡ II</verse>
				<verse number="23">ನನ್ನ ನ್ಯಾಯವನು ನಿರ್ಣಯಿಸು ದೇವಾ ಎಚ್ಚೆತ್ತು I ನನ್ನ ವಿವಾದವನು ವಿಚಾರಿಸು ಪ್ರಭು ನೀನೆದ್ದು ನಿಂತು II</verse>
				<verse number="24">ಹೇ, ದೇವಾ, ನಿನ್ನ ನೀತಿಗನುಸಾರ ತೀರ್ಪುಕೊಡು I ಶತ್ರುಗಳೆನ್ನ ವಿಷಯದಲ್ಲಿ ಹರ್ಷಗೊಳ್ಳದಂತೆ ಮಾಡು II</verse>
				<verse number="25">ತಮ್ಮಾಸೆ ಕೈಗೂಡಿತೆನಲು ಅವರಿಗಿರಬಾರದು ಅವಕಾಶ I ಅವನನು ಕಬಳಿಸಿಬಿಟ್ಟೆವು ಎಂದು ಕೊಚ್ಚಿಕೊಳ್ಳುವ ಸಂತೋಷ II</verse>
				<verse number="26">ನನಗಾದ ಕೇಡನು ನೋಡಿ ಹಿಗ್ಗುವವರಿಗಾಗಲಿ ಸಿಗ್ಗು I ನನ್ನನು ಕುಗ್ಗಿಸಿ ಮೆರೆವವರನು ಮುಚ್ಚಲಿ ಲಜ್ಜೆಯ ಮುಸುಕು II</verse>
				<verse number="27">ನನಗೆ ನ್ಯಾಯ ಬಯಸುವವರು ನಲಿದು ಮಾಡಲಿ ಜಯಕಾರ I “ದಾಸನ ಹಿತೈಷಿ ಪ್ರಭುಗೆ, ಜೈ” ಎಂಬ ನಿರಂತರ ಪ್ರಚಾರ II</verse>
				<verse number="28">ಆಗೆನ್ನ ಜಿಹ್ವೆ ಸಾರುವುದು ನಿನ್ನ ನೀತಿಯನು I ದಿನವೆಲ್ಲಾ ವರ್ಣಿಸುವುದು ನಿನ್ನ ಕೀರ್ತಿಯನು II</verse>
			</chapter>
			<chapter number="36">
				<verse number="1">ಜಿನುಗುಟ್ಟುತಿಹುದು ಪಾಪವು ದುಷ್ಟನ ಮನದಲಿ I ದೇವ ಭಯವೇ ಇಲ್ಲ ಅವನ ಕಣ್ಣೆದುರಿನಲಿ II</verse>
				<verse number="2">“ಬೈಲಿಗೆ ಬಾರದು ನಿನ್ನ ದೋಷವು, ನಿನಗದು ಕೇಡು ತರದು” I ಇಂತುಲಿದು ಆ ಪಾಪದ ಜಿನುಗು ಅವನನು ವಂಚಿಸುತಿಹುದು II</verse>
				<verse number="3">ಅವನ ಕೀಳು ಬಾಯಿಯ ತುಂಬ ಕೇಡು ಕಪಟ I ಸನ್ಮತಿ ಸತ್ಕಾರ್ಯಗಳನ್ನು ಬಿಟ್ಟೇಬಿಟ್ಟ II</verse>
				<verse number="4">ಆಲೋಚಿಸುತ್ತಿಹನು ಅಕ್ರಮವನು ಹಾಸಿಗೆಯಿಂದಲೆ I ಹೇಸನು ದುಷ್ಕೃತ್ಯಕ್ಕೆ, ಮುನ್ನುಗ್ಗುವನು ದುರ್ಮಾರ್ಗದಲೆ II</verse>
				<verse number="5">ನಿನ್ನ ಪ್ರೀತಿ ಪ್ರಭು, ಚುಂಬಿಸುತಿಹುದು ಗಗನವನು I ನಿನ್ನ ಸತ್ಯವು ಮುಟ್ಟುತಿಹುದು ಮೇಘಮಂಡಲವನು II</verse>
				<verse number="6">ನಿನ್ನ ನೀತಿ ಸುರಗಿರಿಯಂತೆ, ನಿನ್ನ ನ್ಯಾಯ ಮಹಾಸಾಗರದಂತೆ I ಮಾನವರನು, ಪಶುಪ್ರಾಣಿಗಳನು ಪ್ರಭು, ಸಲಹುವೆ ರಕ್ಷಕನಂತೆ II</verse>
				<verse number="7">ನಿನ್ನಚಲ ಪ್ರೀತಿ, ಹೇ ದೇವಾ, ಎಷ್ಟೋ ಅಮೂಲ್ಯ I ನಿನ್ನಕ್ಕರೆಯ ರೆಕ್ಕೆಗಳಡಿ ನರಮಾನವರಿಗಾಶ್ರಯ II</verse>
				<verse number="8">ಅವರ ತೃಪ್ತಿ ನಿನ್ನ ಮಂದಿರದ ಸಮೃದ್ಧಿಯಿಂದ I ಅವರ ಪಾನೀಯ ನಿನ್ನ ಸಂಭ್ರಮ ಪ್ರವಾಹದಿಂದ II</verse>
				<verse number="9">ನಿನ್ನಲ್ಲಿದೆ ಜೀವದ ಬುಗ್ಗೆ I ನಿನ್ನ ಬೆಳಕಿನಿಂದ ಬೆಳಕೆಮಗೆ II</verse>
				<verse number="10">ನಿನ್ನನರಿತವರನು ಪ್ರೀತಿಸು ಮುಂದಕ್ಕೂ I ಒಳಿತನ್ನು ಮಾಡು ನೇರಮನಸ್ಕರಿಗೂ II</verse>
				<verse number="11">ಗರ್ವಿಗಳ ಕಾಲಿಗೆ ನಾ ಬೀಳುವುದು ಬೇಡ I ದುರುಳರ ಕೈ ನನ್ನ ಹೊರದೂಡುವುದು ಬೇಡ II</verse>
				<verse number="12">ಕೇಡು ಮಾಡಿದವರಿದೋ ಕೆಳಗೆ ಬಿದ್ದಿಹರು I ಮರಳಿ ಏಳಲಾಗದೆ ಮಡಿದು ಬಿದ್ದಿಹರು II</verse>
			</chapter>
			<chapter number="37">
				<verse number="1">ಕೇಡು ಮಾಡುವವರ ನೋಡಿ ಸಿಡಿಮಿಡಿಯಾಗಬೇಡ I ದುರಾಚಾರಿಗಳ ಕಂಡು ಮಚ್ಚರಗೊಳ್ಳಬೇಡ II</verse>
				<verse number="2">ಅವರು ಒಣಗಿಹೋಗುವರು ಕಾಡುಗರಿಕೆಯಂತೆ I ಬೇಗ ಬಾಡಿಹೋಗುವರು ಕಾಯಿಪಲ್ಯದಂತೆ II</verse>
				<verse number="3">ಒಳಿತನು ಮಾಡು ಪ್ರಭುವಿನಲಿ ಭರವಸೆ ಇಟ್ಟು I ಸುರಕ್ಷಿತನಾಗಿ ಬಾಳು ಸಿರಿನಾಡಿನಲ್ಲಿದ್ದು II</verse>
				<verse number="4">ಪ್ರಭುವಿನಿಂದಲೆ ಬಯಸು ನಿನ್ನಾನಂದವನು I ನೆರವೇರಿಸುವನಾತ ನಿನ್ನ ಮನದಾಸೆಯನು II</verse>
				<verse number="5">ಪ್ರಭುವಿಗೆ ಬಿಡು ಜೀವನಯಾತ್ರಾ ಚಿಂತೆಯನು I ಭರವಸೆಯಿಂದಿರು, ಆತನದನು ಸಾಗಿಸುವನು II</verse>
				<verse number="6">ಬೆಳಗಿಸುವನು ನಿನ್ನ ಸತ್ಯಸಂಧತೆಯನು ಸೂರ್ಯೋದಯದಂತೆ I ಪ್ರಕಟಿಸುವನು ನಿನ್ನಾ ನ್ಯಾಯನಿಷ್ಠೆಯನು ನಡುಹಗಲಿನಂತೆ II</verse>
				<verse number="7">ಪ್ರಭುವಿನ ಮುಂದೆ ಪ್ರಶಾಂತನಾಗಿರು, ಆತನಿಗೋಸ್ಕರ ಕಾದಿರು I ಸ್ವಾರ್ಥಿಗಳ, ಕುತಂತ್ರಿಗಳ ಏಳಿಗೆಯ ಕಂಡು ಉರಿಗೊಳ್ಳದಿರು II</verse>
				<verse number="8">ಅಡಗಿಸು ಕೋಪವನು; ವರ್ಜಿಸು ಕ್ರೋಧವನು I ಕಿಡಿಕಿಡಿಯಾಗಬೇಡ, ತರುವುದದು ಕೇಡನು II</verse>
				<verse number="9">ವಧಿತರಾಗಿ ನಾಶವಾಗುವರು, ಕೇಡು ಮಾಡುವವರು I ಪ್ರಭುವಿಗಾಗಿ ಕಾಯುವವರು ನಾಡಿಗೊಡೆಯರಾಗುವರು II</verse>
				<verse number="10">ದುರುಳನು ಕಾಣದೆ ಹೋಗುವನು ಕೊಂಚಕಾಲದೊಳು I ಹುಡುಕಿದರು ಕಾಣಸಿಗನಾಗ ಊರು ಕೇರಿಗಳೊಳು II</verse>
				<verse number="11">ದೀನದಲಿತರು ಬಾಧ್ಯಸ್ಥರಾಗುವರು ನಾಡಿಗೆ I ಆನಂದಿಸುವರು ಅಲ್ಲಿ ದೊರಕುವ ಸುಖಶಾಂತಿಗೆ II</verse>
				<verse number="12">ದುರ್ಜನನು ಹೂಡಿಹನು ಒಳಸಂಚು ಸಜ್ಜನನ ವಿರುದ್ಧ I ಕಟಕಟನೆ ಹಲ್ಲು ಕಡಿಯುತಿಹನಿದೋ ಆತನ ವಿರೋಧ II</verse>
				<verse number="13">ಅಂಥವನ ಕಂಡು ಪ್ರಭು ನಸುನಗುತಿಹನು I ಅವನಿಗೊದಗಲಿಹ ಗತಿಯನು ಕಾಣುತಿಹನು II</verse>
				<verse number="14">ಹಿಡಿದಿಹರು ದುರುಳರು ಕತ್ತಿಯನು, ಎತ್ತಿಹರು ಬಿಲ್ಲನು I ಕೆಡಹಲು ದೀನದಲಿತರನು, ಕೊಲ್ಲಲು ಸಜ್ಜನರನು II</verse>
				<verse number="15">ಹಿಡಿದ ಕತ್ತಿ ಹಿಡಿದವರೆದೆಯನೆ ಇರಿವುದು I ಎತ್ತಿದ ಬಿಲ್ಲುಬಾಣ ಸಿಡಿದು ಮುರಿವುದು II</verse>
				<verse number="16">ದುರುಳರ ವಿಪುಲ ಆಸ್ತಿಪಾಸ್ತಿಗಿಂತಲು I ಸತ್ಯವಂತರ ಬಡತನವೆನಿತೊ ಮಿಗಿಲು II</verse>
				<verse number="17">ಬತ್ತಿಹೋಗುವುದು ದುರ್ಜನರ ಭುಜಬಲ I ಸತ್ಯವಂತರಿಗೆ ಪ್ರಭುವೇ ಉನ್ನತಬಲ II</verse>
				<verse number="18">ಸಜ್ಜನರಿಗೆ ಸಿಗುವ ಸೊತ್ತು ಶಾಶ್ವತ I ಪ್ರಭುವಿಗೆ ಗೊತ್ತು ಅವರ ಬಾಳಿನಂತ್ಯ II</verse>
				<verse number="19">ಮಾನನಷ್ಟವಿರದು ಕಷ್ಟಕಾಲದಲಿ I ಕುಂದುಕೊರತೆಯಿರದು ಬರಗಾಲದಲಿ II</verse>
				<verse number="20">ದುರುಳರ ಬೆಡಗೋ ಬಾಡಿಹೋಗುವುದು ಹುಲ್ಲಿನಂತೆ I ಪ್ರಭುವಿನ ಶತ್ರುಗಳು ತೇಲಿಹೋಗುವರು ಹೊಗೆಯಂತೆ II</verse>
				<verse number="21">ಕೊಂಡ ಸಾಲವನು ತೀರಿಸಲಾರನಾ ದುರ್ಜನನು I ಉದಾರವಾಗಿ ದಾನ ಧರ್ಮಮಾಳ್ಪನಾ ಸಜ್ಜನನು II</verse>
				<verse number="22">ಪ್ರಭುವಿನಿಂದ ಆಶೀರ್ವದಿತರು ನಾಡಿಗೆ ಬಾಧ್ಯಸ್ಥರು I ಆತನಿಂದ ಶಾಪಗ್ರಸ್ಥರು ಬಹಿಷ್ಕೃತರು II</verse>
				<verse number="23">ಪ್ರಭುವಿಗೆ ಪ್ರಿಯವು ಮಾನವನ ಪ್ರವರ್ತನ I ಅವನ ನಡತೆಗೆ ಆತನೆ ಮಾರ್ಗದರ್ಶನ II</verse>
				<verse number="24">ಬಿದ್ದರೂ ಅವನೆದ್ದೇ ತೀರುವನು I ಪ್ರಭು ಅವನಿಗೆ ಊರುಗೋಲಾಗಿಹನು II</verse>
				<verse number="25">ಸಜ್ಜನ ದಿಕ್ಕಿಲ್ಲದಿರುವುದನು, ಅವನ ಸಂತತಿ ಭಿಕ್ಷೆ ಬೇಡುವುದನು I ನಾ ಕಾಣೆನು, ವೃದ್ಧ ನಾನೆಂದೂ ಕಾಣೆನು, ಬಾಲ್ಯದಿಂದ ಕಾಣೆನು II</verse>
				<verse number="26">ದಾನ ನೀಡುವನು, ಸಾಲ ನಿರಾಕರಿಸನು ಸಜ್ಜನನು I ಆತನ ಸಂತಾನ ಹೊಂದುವುದು ಆಶೀರ್ವಾದವನು II</verse>
				<verse number="27">ಕೆಟ್ಟದನು ಬಿಡು, ಒಳ್ಳೆಯದನು ಮಾಡು I ಸಿರಿನಾಡಿನಲಿ ಚಿರಕಾಲ ಬಾಳು II</verse>
				<verse number="28">ಪ್ರಭುವು ನ್ಯಾಯಪ್ರಿಯನು, ಭಕ್ತಜನರ ಪರಿಪಾಲಕನು I ಚಿರವುಳಿಸುವನು ಇವರನು, ಅಳಿಸುವನು ದುರುಳರ ಪೀಳಿಗೆಯನು II</verse>
				<verse number="29">ಸಜ್ಜನರು ಸಿರಿನಾಡಿಗೆ ಬಾಧ್ಯಸ್ಥರು I ಅಲ್ಲವರು ಶಾಶ್ವತವಾಗಿ ಬಾಳುವರು II</verse>
				<verse number="30">ಸಜ್ಜನರ ಬಾಯಿ ಆಡುವುದು ಸುಜ್ಞಾನವನು I ಅವನ ನಾಲಿಗೆ ನುಡಿಯುವುದು ನ್ಯಾಯನೀತಿಯನು II</verse>
				<verse number="31">ಅವನ ಎದೆಯಲ್ಲಿದೆ ದೇವರ ನಿಯಮ I ನೆಲೆತಪ್ಪದು ಅವನ ನಡತೆಯ ಕ್ರಮ II</verse>
				<verse number="32">ದುಷ್ಟನಿಟ್ಟಿರುವನು ಕಣ್ಣನು ಸಜ್ಜನರ ಮೇಲೆ I ಹೊಂಚುಹಾಕಿ ನೋಡುತಿಹನು ಮಾಡಲವರ ಕೊಲೆ II</verse>
				<verse number="33">ಪ್ರಭು ಬಿಡನವನನು ದುಷ್ಟ ಶಕ್ತಿಯ ವಶಕ್ಕೆ I ಗುರಿಪಡಿಸನು ನ್ಯಾಯಸ್ಥಾನದ ಶಿಕ್ಷೆಗೆ II</verse>
				<verse number="34">ಪ್ರಭುವನು ನಂಬಿ ನಡೆ ಆತನ ಪಥದಲೇ I ಉದ್ಧಾರವಾಗುವೆ, ನಾಡಿಗೊಡೆಯನಾಗುವೆ I ದುಷ್ಟರ ವಿನಾಶವನು ಕಣ್ಣಾರೆ ಕಾಣುವೆ II</verse>
				<verse number="35">ದುರುಳನೋರ್ವ ಮಹಾಗರ್ವದಿಂದ ಬಾಳುತ್ತಿದ್ದ I ಹುಲುಸಾಗಿ ಬೆಳೆದ ದೇವದಾರು ಮರದಂತಿದ್ದ II</verse>
				<verse number="36">ಕ್ರಮೇಣ ನಾನು ಆ ಮಾರ್ಗವಾಗಿ ನಡೆಯಲು I ಕಾಣಲಿಲ್ಲ, ಗುರುತೂ ಇರಲಿಲ್ಲ ಹುಡುಕಲು II</verse>
				<verse number="37">ನಿರಪರಾಧಿಯನ್ನು ಲಕ್ಷಿಸು, ಸತ್ಪುರುಷನನು ವೀಕ್ಷಿಸು I ಶಾಂತಿಪ್ರಿಯನಿಗಿದೆ ಸಂತಾನವೃದ್ಧಿ, ಇದ ಗಮನಿಸು II</verse>
				<verse number="38">ನಾಶವಾಗುವುದು ನಿಜ, ದೋಷಿಗಳ ಮನೆತನ I ನಿರ್ಮೂಲವಾಗುವುದು ದುರುಳರ ಸಂತಾನ II</verse>
				<verse number="39">ಸಜ್ಜನರ ಜೀವೋದ್ಧಾರ ಪ್ರಭುವಿನಿಂದ I ಆಪತ್ಕಾಲದಲಿ ಆಶ್ರಯ ಆತನಿಂದ II</verse>
				<verse number="40">ತನ್ನಾಶ್ರಿತರನು ಪ್ರಭು ಕೈ ನೀಡಿ ಕಾಪಾಡುವನು I ದುಷ್ಟರ ವಶದಿಂದವರನು ತಪ್ಪಿಸಿ ಉದ್ಧರಿಸುವನು II</verse>
			</chapter>
			<chapter number="38">
				<verse number="1">ಕೋಪದಿಂದೆನ್ನ ಪ್ರಭು, ಬೈಯಬೇಡ I ರೋಷದಿಂದೆನ್ನನು ದಂಡಿಸಲು ಬೇಡ II</verse>
				<verse number="2">ನಿನ್ನ ಬಾಣಗಳು ನಾಟಿವೆ ನನ್ನೊಳಗೆ I ನಿನ್ನ ಹಸ್ತವು ಎರಗಿದೆ ನನ್ನ ಮೇಲೆ II</verse>
				<verse number="3">ನನ್ನ ದೇಹದಲ್ಲಿಲ್ಲ ಸೌಖ್ಯ ನಿನ್ನ ಕೋಪದ ನಿಮಿತ್ತ I ನನ್ನೆಲುಬಿನಲ್ಲಿಲ್ಲ ಕ್ಷೇಮ ನನ್ನ ಪಾಪದ ಪ್ರಯುಕ್ತ II</verse>
				<verse number="4">ಮುಳುಗಿಸಿಬಿಟ್ಟಿವೆ ನನ್ನ ಅಪರಾಧಗಳೆನ್ನನು I ಅಮುಕಿಬಿಟ್ಟಿವೆ ಹೊರಲಾರದ ಹೊರೆಯಂತೆನ್ನನು II</verse>
				<verse number="5">ಕೀವು ಸೋರಿ ನಾರುತ್ತಿವೆ ನನ್ನ ಪಾಪದ ಗಾಯಗಳು I ಇದಕ್ಕೆಲ್ಲ ಕಾರಣವು ನನ್ನ ಮೂರ್ಖತನವು II</verse>
				<verse number="6">ಬಾಗಿ ಕುಗ್ಗಿಹೋಗಿರುವೆ ಪ್ರಭು ಬಹಳವಾಗಿ I ದಿನವೆಲ್ಲ ಅಲೆಯುತ್ತಿರುವೆ ದುಃಖಭರಿತನಾಗಿ II</verse>
				<verse number="7">ಉರಿಬಡಿದಂತಿದೆ ಎನ್ನ ಸೊಂಟಕೆ I ಆರೋಗ್ಯವಿಲ್ಲದಿದೆ ದೇಹಕೆ II</verse>
				<verse number="8">ಜೋಮು ಹಿಡಿದಂತಿದೆ, ಜೀವ ಹಿಂಡಿದಂತಿದೆ I ಹೃದಯವೇದನೆಯಿಂದ ನರಳಾಡುತ್ತಿರುವೆ II</verse>
				<verse number="9">ನನ್ನ ಗೋಳಾಟ ಪ್ರಭು, ನಿನಗೆ ಗೊತ್ತಿದೆಯಯ್ಯಾ I ನನ್ನ ಮನದಾಸೆ ನಿನಗೆ ಬಯಲಾಗಿದೆಯಯ್ಯಾ II</verse>
				<verse number="10">ಬಡಿದುಕೊಳ್ಳುತಿದೆ ಹೃದಯ, ಹುದುಗಿಹೋಗಿದೆ ಚೇತನ I ಮಬ್ಬಾಗಿ ಹೋಗಿದೆ ನನ್ನೆರಡು ನಯನಸಾಧನ II</verse>
				<verse number="11">ನನ್ನ ಜಾಡ್ಯ ನೋಡಿ ದೂರ ಸರಿದರು ನೆಂಟರಿಷ್ಟರು I ಬಳಿಬಾರದೆ ಅಲ್ಲೇ ನಿಂತರು ಬಂಧು ಬಳಗದವರು II</verse>
				<verse number="12">ಉರಲನೊಡ್ಡಿಹರು ನನ್ನ ಪ್ರಾಣಹಂತಕರು I ನಿರ್ಧರಿಸಿಹರು ವಿನಾಶವನ್ನು ಕೇಡು ಬಗೆವವರು I ಕುತಂತ್ರವ ಮಾಡುವರು ಸತತ ಮೋಸಗಾರರು II</verse>
				<verse number="13">ನಾನಂತು ಕೇಳದಿದ್ದೆ ಕಿವುಡನಂತೆ I ಮರು ಉತ್ತರಿಸದೆ ಮೌನವಿದ್ದೆ ಮೂಕನಂತೆ II</verse>
				<verse number="14">ಅಹುದಹುದು ಕಿವಿ ಕೇಳಿಸದವನಂತಿದ್ದೆ I ಪ್ರತ್ಯುತ್ತರ ಕೊಡಲಾಗದವನಂತಿದ್ದೆ II</verse>
				<verse number="15">ನಿನಗಾಗಿ ಪ್ರಭು, ಕಾದಿರುವೆನಯ್ಯಾ I ನನಗಾಗಿ ನೀ ಉತ್ತರಿಸೋ, ದೇವಾ II</verse>
				<verse number="16">ಶತ್ರುಗಳು ಹರ್ಷಿಸಬಾರದು ನನ್ನ ವಿಷಯದಲಿ I ಹಿಗ್ಗಬಾರದವರು ನಾ ಜಾರಿ ಬಿದ್ದಲ್ಲಿ II</verse>
				<verse number="17">ಇಗೋ, ನಾನೆಡವಿ ಬೀಳಲಿರುವೆ I ಆಪತ್ತಿಗಾಗಿ ಸಂಕಟಪಡುತ್ತಿರುವೆ II</verse>
				<verse number="18">ನಾನಪರಾಧಿಯೆಂದು ನಿವೇದಿಸುವೆ I ಪಾಪಕ್ಕಾಗಿ ಪಶ್ಚಾತ್ತಾಪ ಪಡುವೆ II</verse>
				<verse number="19">ಬಲಿಷ್ಠ ವೈರಿಗಳು ವಿರೋಧಿಸುತಿಹರು ನಿಷ್ಕಾರಣವಾಗಿ I ಶತ್ರುಗಳನೇಕರು ದ್ವೇಷಿಸುತಿಹರು ಅನ್ಯಾಯವಾಗಿ II</verse>
				<verse number="20">ಎಸಗಿಹರು ಉಪಕಾರಕೆ ಪ್ರತಿಯಾಗಿ ಅಪಕಾರ I ಎದುರಿಸುತಿಹರೀಗ ನಾ ಹಿಡಿದಿರುವ ಸನ್ಮಾರ್ಗ II</verse>
				<verse number="21">ಹೇ ಪ್ರಭು, ನನ್ನ ಕೈ ಬಿಡಬೇಡಯ್ಯಾ I ದೇವಾ, ನನಗೆ ದೂರವಾಗಬೇಡಯ್ಯಾ II</verse>
				<verse number="22">ಓ ಪ್ರಭುವೇ, ನನ್ನುದ್ಧಾರಕನೆ, I ನನಗೆ ನೆರವಾಗಲು ಬಾ ಬೇಗನೆ II</verse>
			</chapter>
			<chapter number="39">
				<verse number="1">ನಾ ಇಂತೆಂದುಕೊಂಡೆ: “ಜಾಗರೂಕನಾಗಿರುವೆ ಜಿಹ್ವೆ ಪಾಪಕ್ಕೆಳೆಯದಂತೆ I ಬಾಯಿಗೆ ಕುಕ್ಕೆ ಹಾಕಿಕೊಂಡಿರುವೆ ದುರ್ಜನರ ಮುಂದೆ” II</verse>
				<verse number="2">ಮೌನವಿದ್ದೆ, ಸನ್ನುಡಿಯದೆಯೂ ಸುಮ್ಮನಿದ್ದೆ I ಉಲ್ಬಣಿಸುತ್ತಿತ್ತು ವೇದನೆಯು ಎಡೆಬಿಡದೆ II</verse>
				<verse number="3">ಎದೆಯ ತಾಪ ಹೆಚ್ಚಿತು, ಚಿಂತೆ ಕಾವೇರಿತು I ಆಗತಾನೆ ಬಾಯ್ತೆರೆದೆ ನಾನಿಂತೆಂದು: II</verse>
				<verse number="4">“ನನ್ನ ಜೀವಾಯುಸ್ಸು ಎನಿತು? ನನ್ನ ಬಾಳಿನ ಮುಗಿವೆಂದು? I ತಿಳಿಯಪಡಿಸು ನನಗೆ ಪ್ರಭು, ನಾನು ಬಲು ಅಸ್ಥಿರನೆಂದು” II</verse>
				<verse number="5">ನನ್ನಾಯುಸ್ಸು ಗೇಣುದ್ದ, ನಿನ್ನೆಣಿಕೆಗದು ಶೂನ್ಯ I ಮಾನವ ಜೀವನ ಕೇವಲ ಉಸಿರಿಗೆ ಸರಿಸಮಾನ! II</verse>
				<verse number="6">ನರಮಾನವನು ಮೆರೆದಾಡುವನು ಮಾಯೆಯಂತೆ I ಅವನ ಸಡಗರವೆಲ್ಲವೂ ನಿರರ್ಥಕದಂತೆ I ಕೂಡಿಪನಾತ ಸಿರಿ ಅದು ಯಾರದಾಗುವುದೆಂದು ಅರಿಯದೆ II</verse>
				<verse number="7">ಇಂತಿರಲು ಪ್ರಭು, ನಾನೇತಕೆ ಕಾದಿರಬೇಕು? I ನೀನೆ ಅಲ್ಲವೆ ನನಗೆ ನಂಬಿಕೆ, ಇದು ಸಾಕು II</verse>
				<verse number="8">ಮುಕ್ತಗೊಳಿಸೆನ್ನ ಪ್ರಭು, ಎಲ್ಲಪರಾಧಗಳಿಂದ I ಕಾದಿರಿಸೆನ್ನನು ಮೂರ್ಖರ ತಿರಸ್ಕಾರದಿಂದ II</verse>
				<verse number="9">ಮೌನದಿಂದಿರುವೆ, ಬಾಯ್ದೆರೆಯದಿರುವೆ I ನನಗೊದಗಿರುವುದು ನಿನ್ನಿಂದಲ್ಲವೆ? II</verse>
				<verse number="10">ಸಾಕು ಮಾಡು ನಿನ್ನ ಕೈ ಹೊಡೆತವನು I ಅದರಿಂದ ನಾ ಸಾಯುತ್ತಿರುವೆನು II</verse>
				<verse number="11">ಪಾಪದ ಪ್ರಯುಕ್ತ ಮಾನವನು ಶಿಕ್ಷಿಸುವಾಗ I ನುಸಿಹತ್ತಿದಂತೆ ನಾಶಪಡಿಸುವೆ ಅವನಾಸ್ಥೆಯನಾಗ I ಮಾನವ ಜೀವನ ಕೇವಲ ಉಸಿರಿಗೆ ಸರಿಸಮಾನ II</verse>
				<verse number="12">ನನ್ನ ಮೊರೆಯ ಕೇಳು, ಪ್ರಾರ್ಥನೆಯನಾಲಿಸು I ಸುಮ್ಮನಿರದೆ ನನ್ನ ಕಂಬನಿಯನೀಕ್ಷಿಸು II ಹೇ ಪ್ರಭು, ನಾನಿನ್ನ ಆಗಂತುಕನಯ್ಯಾ I ಪೂರ್ವಜರಂತೆ ನಾ ಪರದೇಶಿಯಯ್ಯಾ II</verse>
				<verse number="13">ನಾ ಕಾಲವಾಗಿ ಕಣ್ಮರೆಯಾಗುವೆ ಇಲ್ಲಿಂದ I ಆ ಮುನ್ನ ಹೊರಳಿಸು ಕೋಪದೃಷ್ಟಿಯನು ನನ್ನಿಂದ I ನಾ ಬಾಳುವಂತೆ ಮಾಡು ಪ್ರಭು, ಸಂತಸದಿಂದ II</verse>
			</chapter>
			<chapter number="40">
				<verse number="1">ಕಾದಿದ್ದೆನು, ಪ್ರಭುವಿಗಾಗಿ ಕಾದಿದ್ದೆನು I ಕೊನೆಗಾತ ನನ್ನತ್ತ ಬಾಗಿ ಕಿವಿಗೊಟ್ಟನು II</verse>
				<verse number="2">ಮೇಲೆತ್ತಿದನು ವಿನಾಶದ ಕೆಸರಿಂದ, ಕರಾಳ ಕೂಪದಿಂದ I ಗೋರ್ಕಲ್ಲ ಮೇಲಿರಿಸಿ ಹೆಜ್ಜೆಯಿಡಿಸಿದನು ಅತಿ ಧೈರ್ಯದಿಂದ II</verse>
				<verse number="3">ಬರಿಸಿದನು ನವಗೀತೆಯನು, ದೇವಸ್ತುತಿಯನು ನನ್ನ ಬಾಯಲಿ I ಇದ ಕಂಡವರು ಭಯಪಡುವರು, ಇಡುವರು ಭರವಸೆ ಪ್ರಭುವಿನಲಿ II</verse>
				<verse number="4">ಪ್ರಭುವಿನಲ್ಲೆ ಭರವಸೆ ಇಟ್ಟು ನಡೆವಾತನು ಧನ್ಯನು I ಗರ್ವಿಗಳನು, ಸುಳ್ಳುದೇವರನು, ಹಿಂಬಾಲಿಸನವನು II</verse>
				<verse number="5">ಪ್ರಭು, ಎನ್ನ ದೇವ, ನಿನಗೆ ಸಮಾನತೆ ಎಲ್ಲಿಯದು I ನೀನೆಸಗಿದ ಪವಾಡ ಪ್ರಯೋಜನಗಳೆನಿತು I ಅಗಣಿತವಾದವುಗಳ ವಿವರ ಅಸದಳವಾದುದು II</verse>
				<verse number="6">ಬೇಡವಾದವು ನಿನಗೆ ಯಜ್ಞಾರ್ಪಣೆ, ಬಲಿಕಾಣಿಕೆ I ಬಯಸಿಲ್ಲ ನೀ ಹೋಮವನೆ, ಪರಿಹಾರಕ ಬಲಿಯನೆ I ಶ್ರವಣಶಕ್ತಿಯನು ಅನುಗ್ರಹಿಸಿದೆ ನೀನು ನನಗೆ II</verse>
				<verse number="7">ನಾನೋಗೊಡುತ ಇಂತೆಂದೆ: “ಇಗೋ ನಾನೇ ಬರುತ್ತಿರುವೆ I ಗ್ರಂಥ ಸುರುಳಿಯಲಿ ನನ್ನ ಕುರಿತು ಲಿಖಿತವಾಗಿದೆಯಲ್ಲವೇ? II</verse>
				<verse number="8">ನಿನ್ನ ಚಿತ್ತಾನುಸಾರ ನಡೆವುದೇ ನನಗೆ ಪರಮಾವೇಶ I ನನ್ನಂತರಂಗದಲಿದೆ ದೇವಾ, ನಿನ್ನ ಧರ್ಮೋಪದೇಶ” II</verse>
				<verse number="9">ಜೀವೋದ್ಧಾರದ ಶುಭಸಂದೇಶವನು ಸಾರಿದೆ ಮಹಾಸಭೆಗೆ I ನಾ ಸಾರಿದೆ ಅದನು ಮೌನವಿರದೆ, ಇದು ಗೊತ್ತಿದೆ ಪ್ರಭು ನಿನಗೆ II</verse>
				<verse number="10">ಬಚ್ಚಿಟ್ಟುಕೊಳ್ಳಲಿಲ್ಲ ನನ್ನೆದೆಯೊಳು ನಿನ್ನ ಸತ್ಸಂಬಂಧವನು I ಪ್ರಕಟಿಸಿದೆನು ಜೀವೋದ್ಧಾರವನು, ನಿನ್ನ ಪ್ರಾಮಾಣಿಕತೆಯನು I ಮಹಾಸಭೆಗೆ ಮರೆಯಿಸದೆ ಸಾರಿದೆನು ನಿನ್ನ ಪ್ರೀತಿ ಸತ್ಯತೆಯನು II</verse>
				<verse number="11">ಅಗಲಿಸಬೇಡ ಪ್ರಭೂ, ನಿನ್ನ ಕೃಪೆಯನು ನನ್ನಿಂದ I ನಿನ್ನ ಪ್ರೀತಿ ಸತ್ಯತೆ ಕಾದಿರಿಸಲಿ ನನ್ನನು ಸತತ II</verse>
				<verse number="12">ಲೆಕ್ಕವಿಲ್ಲದಾಪತ್ತುಗಳು ನನ್ನನು ಸುತ್ತಿಕೊಂಡಿವೆ I ದಿಕ್ಕು ತೋಚದಂತೆನ್ನ ಪಾಪಗಳು ನನಗಂಟಿಕೊಂಡಿವೆ I ಸಿಲುಕವು ಎಣಿಕೆಗೆ ತಲೆಗೂದಲಂತೆ, ನಾನೆದೆಗುಂದಿರುವೆ II</verse>
				<verse number="13">ಕರುಣೆಯಿಂದೆನ್ನನು ಪ್ರಭು ರಕ್ಷಿಸ ಬಾ I ನನಗೊತ್ತಾಸೆ ಮಾಡಲು ಪ್ರಭು, ಬೇಗ ಬಾ II</verse>
				<verse number="14">ನನ್ನ ಕೊಲೆಗೆಂದು ಯತ್ನಿಸುವವರು ನಾಚಿ ಗಲಿಬಿಲಿಗೊಳ್ಳಲಿ I ನನ್ನಳಿವನು ಕೋರುವಂಥವರು ಲಜ್ಜೆಯಿಂದ ಹಿಂದಿರುಗಲಿ II</verse>
				<verse number="15">ಆಹಾ ಆಹಾ ಎಂದು ಹಾಸ್ಯ ಮಾಡುವವರು I ಅಕಟಕಟವೆನ್ನಲಿ ಹೇಸಿಗೆಯಿಂದಾ ನರರು II</verse>
				<verse number="16">ನಿನ್ನನು ಅರಸುವವರೆಲ್ಲರು ಹರ್ಷಾನಂದಗೊಳ್ಳಲಿ I ನಿನ್ನ ರಕ್ಷಣಾಪ್ರಿಯರು ಸತತ “ಪ್ರಭು ಪರಾಕ್ರಮಿ” ಎನ್ನಲಿ II</verse>
				<verse number="17">ಬಡವನು, ದುರ್ಬಲನು ಆದೆನಗೆ ಪ್ರಭೂ, ನೀ ಹಿತಚಿಂತಕನು I ತಡಮಾಡಬೇಡ ದೇವಾ, ನೀನೆನಗುದ್ಧಾರಕನು, ಸಹಾಯಕನು II</verse>
			</chapter>
			<chapter number="41">
				<verse number="1">ದಿಕ್ಕಿಲ್ಲದವನನು ಲಕ್ಷಿಸುವವನು ಧನ್ಯನು I ಆಪತ್ಕಾಲದಲಿ ಆದವನನು ಪ್ರಭು ರಕ್ಷಿಸುವನು II</verse>
				<verse number="2">ಅಂಥವನನು ಪ್ರಭು ಜೀವದಿಂದಿರಿಸುವನು, ಸುರಕ್ಷಿತವಾಗಿಡುವನು I ನಾಡಿನಲ್ಲವನನು ಧನ್ಯನಾಗಿಸುವನು, ಶತ್ರುಗಳಿಗಧೀನನಾಗಿಸನು II</verse>
				<verse number="3">ರೋಗದಿ ಹಾಸಿಗೆ ಹಿಡಿದಿರಲು ಪ್ರಭು ಸುಧಾರಿಸುವನು I ರೋಗ ನಿವಾರಿಸಿ ಅವನಿಗೆ ಆರೋಗ್ಯವನೀಯುವನು II</verse>
				<verse number="4">ನಾನಂತು, “ಪ್ರಭೂ ಕರುಣಿಸು, ಗುಣಪಡಿಸೆನ್ನನು I ನಿನಗೆ ವಿರುದ್ಧ ಪಾಪಗೈದೆ” ಎಂದು ಬೇಡುವೆನು II</verse>
				<verse number="5">“ಇವನ ಸಾವೆಂದು? ಇವ ನಿರ್ನಾಮವಾಗುವದೆಂತು?” I ನನಗೆ ಕೇಡು ಬಯಸುವವರ ಕುಹಕ ನುಡಿಯಿದು II</verse>
				<verse number="6">ನೋಡಬರುವರು, ನವಿರಾದ ಮಾತನಾಡುವರವರು I ಕೇಡನೆ ತುಂಬಿಸಿಕೊಂಡು ಹೊರಬಂದೊಡನೆ ಹರಡುವರು II</verse>
				<verse number="7">ಹಗೆಯವರು ಎನಗೆ ವಿರುದ್ಧ ಗುಜುಗುಟ್ಟುತಿಹರು I ಅವರೆಲ್ಲರು ಎನಗೆ ಕೇಡನೆ ಕಲ್ಪಿಸುತಿಹರು: II</verse>
				<verse number="8">“ಹಾಸಿಗೆಯಿಂದವನು ಮರಳಿ ಏಳುವಂತಿಲ್ಲ I ಘಾಸಿ ರೋಗದಿಂದ ವಾಸಿಯಾಗುವಂತಿಲ್ಲ” II</verse>
				<verse number="9">ನನ್ನಾಪ್ತಮಿತ್ರನು, ನನ್ನ ನಂಬಿಕೆಗೆ ಪಾತ್ರನು I ನನ್ನೊಡನೆ ಉಂಡವನು, ನನಗೆರಡು ಬಗೆದಿಹನು II</verse>
				<verse number="10">ನೀನಾದರೋ ಪ್ರಭು ಕರುಣಿಸು, ಏಳ ಮಾಡೆನ್ನನು I ನಾನವರಿಗಾಗಿ ಮುಯ್ಯಿಗೆ ಮುಯ್ಯಿ ತೀರಿಸುವೆನು II</verse>
				<verse number="11">ವಿರೋಧಿಗಳೆನ್ನ ಮೇಲೆ ಜಯಗೊಳ್ಳದಂದು I ಅರಿತುಕೊಳ್ವೆನು ನಿನ್ನೊಲುಮೆ ನನಗಿದೆಯೆಂದು II</verse>
				<verse number="12">ನಿರ್ದೋಷಿಯಾದೆನ್ನನು ನೀನುದ್ಧರಿಸುವೆ I ಚಿರಕಾಲ ನಿನ್ನ ಸನ್ನಿಧಿಯಲ್ಲೆನ್ನನು ಇರಿಸುವೆ II</verse>
				<verse number="13">ಇಸ್ರಯೇಲರ ದೇವರಾದ ಪ್ರಭುವಿಗೆ ಜಯ I ಯುಗಯುಗಾಂತರಕು ಆಮೆನ್ ಆಮೆನ್, ಜಯಜಯ II</verse>
			</chapter>
			<chapter number="42">
				<verse number="1">ಬಾಯಾರಿದ ಜಿಂಕೆ ಹಾತೊರೆಯುವಂತೆ ತೊರೆಗಾಗಿ I ದಣಿದೆನ್ನ ಮನ ದೇವಾ, ಹಂಬಲಿಸುತಿದೆ ನಿನಗಾಗಿ II</verse>
				<verse number="2">ಜೀವಂತ ದೇವನಿಗಾಗಿ ದಾಹದಿಂದಿದೆ ಎನ್ನ ಮನ I ನಾ ತೆರಳಿ ಪಡೆವುದೆಂತು ಆ ದೇವನ ಮುಖದರ್ಶನ? II</verse>
				<verse number="3">“ಎಲ್ಲಿ? ನಿನ್ನ ದೇವನೆಲ್ಲಿ?” ಎಂದು ಜನ ಜರೆಯುತಿರಲು I ಕಂಬನಿಯೆ ನನಗನ್ನಪಾನವಾಗಿಹುದು ಹಗಲಿರುಳು II</verse>
				<verse number="4">ಜನಸಮೂಹದೊಡನೆ ನಾ ಜಯಜಯಕಾರ ಮಾಡುತ I ಸ್ತುತಿಗೀತೆಗಳ ಹಾಡುತ, ತೀರ್ಥಯಾತ್ರೆ ಗೈಯುತ I ದೇಗುಲಕೆ ತೆರಳಿದಾ ಸವಿನೆನಪು ಮನಕರಗಿಪುದು ನಿರುತ II</verse>
				<verse number="5">ಎನ್ನ ಮನವೆ, ಚಿಂತಿಸುವೆಯೇಕೆ? I ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II</verse>
				<verse number="6">ನನಗಾಗುತ್ತದೆ ನಿನ್ನ ಸ್ಮರಣೆ ಮನ ಕುಗ್ಗಿದಾಗ I ಜೋರ್ದನ್, ಹೆರ್ಮನ್ ನಾಡಿಂದ, ಮೀಸಾರ್ ಗುಡ್ಡೆಯಿಂದ II</verse>
				<verse number="7">ನಿನ್ನ ಜಲಪಾತಗಳ ಘನನಿನಾದ, ಮಡುವು ಮಡುವನು ಕರೆದಂತಿದೆ I ನಿನ್ನಲೆಗಳು, ಎಲ್ಲ ತರಂಗಗಳು ತಲೆಯ ಮೇಲೆ ಹಾದು ಹೋದಂತಿವೆ II</verse>
				<verse number="8">ಹಗಲಲಿ ಪ್ರೀತಿಯನುಗ್ರಹಿಸಲಿ ದೇವನೆನಗೆ I ಇರುಳಲಿ ಎನ್ನಯ ಬಾಯಲ್ಲಿರಲಿ ಆತನ ಗೀತೆ I ಪ್ರಾರ್ಥನೆ ಸಲ್ಲಲಿ ಎನ್ನ ಜೀವಾಧಾರ ದೇವಗೆ II</verse>
				<verse number="9">ಶರಣ ದೇವನಿಗೆ “ದೇವಾ, ನನ್ನನೇಕೆ ಮರೆತೆ? I ನಾನಲೆಯಬೇಕೆ ಶತ್ರುಬಾಧೆಪೀಡಿತನಾಗಿ ಭಿಕಾರಿಯಂತೆ?” II</verse>
				<verse number="10">“ನಿನ್ನ ದೇವನೆಲ್ಲಿ?” ಎಂದು ವಿರೋಧಿಗಳು ಸತತ ಹಂಗಿಸುವಾಗ I ನನ್ನೆಲುಬುಗಳು ಮುರಿದಂತಾಗುತ್ತದೆ ಆ ಜರೆಯ ಕೇಳಿದಾಗ II</verse>
				<verse number="11">ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II</verse>
			</chapter>
			<chapter number="43">
				<verse number="1">(42ನೇ ಕೀರ್ತನೆ ಮುಂದುವರಿದುದು) ನಿರ್ಣಯಿಸು ನನ್ನ ನ್ಯಾಯವನು ಓ ದೇವಾ I ವಾದಿಸು ಆ ಭಕ್ತಿಹೀನ ಜನತೆಯ ವಿರುದ್ಧ I ಬಿಡಿಸೆನ್ನನು ವಂಚಕರಿಂದ, ಅಧರ್ಮಿಗಳಿಂದ II</verse>
				<verse number="2">ನನಗೆ ಕೋಟೆ ನೀನಲ್ಲವೇ? ನನ್ನ ಕೈ ಬಿಟ್ಟಿರುವೆ ಏಕೆ? I ಶತ್ರು ಬಾಧೆಯಿಂದ ಭಿಕಾರಿಯಂತೆ ನಾನಲೆಯಬೇಕೆ? II</verse>
				<verse number="3">ಕಳುಹಿಸು ನಿನ್ನ ಜ್ಯೋತಿಯನು, ನಿನ್ನ ಸತ್ಯವನ್ನು ನನ್ನ ನಡೆಸಲಿಕ್ಕೆ I ಸೇರಿಸಲೆನ್ನನು ನಿನ್ನ ಪವಿತ್ರ ಪರ್ವತಕೆ, ನಿನ್ನಯ ನಿವಾಸಕೆ II</verse>
				<verse number="4">ಬರುವೆನಾಗ ನಿನ್ನ ಬಲಿಪೀಠದ ಬಳಿಗೆ I ನನ್ನಾನಂದ ನಿಧಿಯಾದ ನಿನ್ನ ಸನ್ನಿಧಿಗೆ I ವೀಣೆ ನುಡಿಸಿ ದೇವಾ, ನಿನ್ನ ಸ್ತುತಿಸಲಿಕೆ II</verse>
				<verse number="5">ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ ಪರಮಾತ್ಮ ಆತನೆನಗೆ II</verse>
			</chapter>
			<chapter number="44">
				<verse number="1">ಕೇಳಿದೆವು ಕಿವಿಯಾರೆ ದೇವಾ, ನೀ ಎಸಗಿದ ಘನಕಾರ್ಯಗಳನು I ವಿವರಿಸಿಹರು ನಮ್ಮ ಪೂರ್ವಜರು ನಿನ್ನಾ ಮಹತ್ಕಾರ್ಯಗಳನು II</verse>
				<verse number="2">ಹೊರಗಟ್ಟಿದೆ ಪರಕೀಯರನು, ನಮ್ಮ ಪೂರ್ವಜರ ನೆಲೆಗೊಳಿಸಲು I ವಿನಾಶಗೊಳಿಸಿದೆ ಅನ್ಯರನು, ನಮ್ಮವರನು ವಿಕಾಸಗೊಳಿಸಲು II</verse>
				<verse number="3">ನಾಡ ಗೆದ್ದುದು ನಮ್ಮವರ ಕತ್ತಿಯಲ್ಲ I ಜಯ ದೊರೆತದು ತಮ್ಮ ಭುಜಬಲದಿಂದಲ್ಲ II ಜಯ ತಂದಿತು ನಿನ್ನ ಬಲಹಸ್ತ, ನಿನ್ನ ಮುಖಕಾಂತಿ I ನಿನ್ನ ಭುಜಬಲ, ನೀ ತೋರಿದಾ ಅಚಲಪ್ರೀತಿ II</verse>
				<verse number="4">ಯಕೋಬಿಗೆ ವಿಜಯ ಗಿಟ್ಟಿಸಿದಾತ I ನೀನಲ್ಲವೆ ದೇವಾ, ನನ್ನ ಅರಸ? II</verse>
				<verse number="5">ಶತ್ರುಗಳನು ಸದೆಬಡಿವೆವು ನಿನ್ನ ಬೆಂಬಲದಿಂದ I ಎದುರಾಳಿಯನು ತುಳಿವೆವು ನಿನ್ನ ಆವೇಶದಿಂದ II</verse>
				<verse number="6">ಬಿಲ್ಲುಬಾಣದಲಿ ನಾ ಭರವಸೆಯಿಡುವುದಿಲ್ಲ I ಕತ್ತಿ ಕಠಾರಿ ನನಗೆ ರಕ್ಷಣೆ ತರುವುದಿಲ್ಲ II</verse>
				<verse number="7">ಹಿಂಸಕರಿಂದ ಸಂರಕ್ಷಿಸುವಾತ ನೀನೆ I ಹಗೆಗಳಿಗೆ ಆಶಾಭಂಗ ತರುವಾತ ನೀನೆ II</verse>
				<verse number="8">ನಿನ್ನಲ್ಲಿಯೇ ದೇವಾ, ಹೆಮ್ಮೆಪಡುವೆವು ಸತತ I ನಿನ್ನ ನಾಮವನೆ ಸಂಕೀರ್ತಿಸುವೆವು ನಿರುತ II</verse>
				<verse number="9">ಆದರೀಗ ನಮ್ಮನು ಕಡೆಗಣಿಸಿರುವೆ, ಕೈ ಬಿಟ್ಟಿರುವೆ I ನಮ್ಮ ಸೇನೆಗಳ ಸಂಗಡ ದೇವ, ಹೊರಟು ಬರದಿರುವೆ II</verse>
				<verse number="10">ಶತ್ರುಗಳಿಗೆ ಬೆಂಗೊಟ್ಟು ನಾವೋಡುವಂತೆ ಮಾಡಿರುವೆ I ಹಗೆಗಳು ಹಾಯಾಗಿ ಸೊತ್ತನು ಸೂರೆಮಾಡ ಬಿಟ್ಟಿರುವೆ II</verse>
				<verse number="11">ನಮ್ಮನೊಪ್ಪಿಸಿರುವೆ ವಧ್ಯಸ್ಥಾನಕೊಯ್ದ ಕುರಿಗಳಂತೆ I ಚದರಿಸಿಬಿಟ್ಟಿರುವೆ ನಮ್ಮನು ಅನ್ಯ ಜನಾಂಗಗಳ ಮಧ್ಯೆ II</verse>
				<verse number="12">ಬಿಡುಕಾಸಿಗಿಂತ ಕಡೆಗಾಣಿಸಿರುವೆ ನಿನ್ನ ಪ್ರಜೆಯನು I ಲಾಭವಿಲ್ಲದವರಂತೆ ವಿಕ್ರಯಿಸಿರುವೆ ಅದನು II</verse>
				<verse number="13">ಪರರು ನಮ್ಮನು ಜರೆಯುವಂತೆ ಮಾಡಿರುವೆ I ನೆರೆಯವರ ಪರಿಹಾಸ್ಯಕ್ಕೆ ಗುರಿಪಡಿಸಿರುವೆ II</verse>
				<verse number="14">ಅನ್ಯಜನ ನಮ್ಮನಣಕಿಸಿ ತಲೆಯಾಡಿಸುವಂತೆ ಮಾಡಿರುವೆ I ಅನ್ಯಾಯಕ್ಕೆ ಅಡ್ಡಹೆಸರಾಗುವಂತೆ ನಮ್ಮನು ಬಿಟ್ಟಿರುವೆ II</verse>
				<verse number="15">ನನ್ನ ಕಣ್ಮುಂದಿದೆ ಈ ಅವಮಾನ ದಿನವೆಲ್ಲ I ಲಜ್ಜೆಯಿಂದ ನಾ ಮುಖ ಮುಚ್ಚಿಕೊಳ್ಳುವಂತಾಗಿದೆಯಲ್ಲಾ II</verse>
				<verse number="16">ದೂಷಕರ ನಿಂದೆಗೆ ಆಸ್ಪದನಾದೆ I ದ್ರೋಹಿಗಳ ವಕ್ರನೋಟಕೆ ಗುರಿಯಾದೆ II</verse>
				<verse number="17">ನಿನ್ನ ಮರೆಯಲಿಲ್ಲ, ನಿನ್ನ ಒಪ್ಪಂದವನು ಮೀರಲಿಲ್ಲ I ಆದರೂ ಒದಗಿವೆಯಲ್ಲ ನಮಗೀ ಅನಾಹುತಗಳೆಲ್ಲ II</verse>
				<verse number="18">ನಮ್ಮಂತರಂಗ ದೂರವಾಗಿಲ್ಲ ನಿನ್ನಿಂದ I ನಾವು ಅಗಲಲಿಲ್ಲ ನೀನು ತೋರಿದ ಮಾರ್ಗದಿಂದ II</verse>
				<verse number="19">ಆದರೂ ನಮ್ಮನ್ನು ತಂದು ನಾಯಿನರಿಗಳ ಪಾಲಾಗಿಸಿರುವೆ I ಕಾರ್ಗತ್ತಲೆಮ್ಮನು ಸುತ್ತುವರಿಯುವಂತೆ ಮಾಡಿರುವೆ II</verse>
				<verse number="20">ನಮ್ಮ ದೇವನ ನಾಮವನು ಮರೆತಿದ್ದೆವಾದರೆ I ಅನ್ಯದೇವರಿಗೆ ನಾವು ಕೈ ಮುಗಿದಿದ್ದೆವಾದರೆ, II</verse>
				<verse number="21">ದೇವಾ, ನಿನಗದು ಬಯಲಾಗದಿರುತ್ತಿತ್ತೆ? I ನಮ್ಮೆದೆ ಗುಟ್ಟು ನಿನಗೆ ತಿಳಿಯದಿರುತ್ತಿತ್ತೆ? II</verse>
				<verse number="22">ಎಣಿಕೆಯಾಗಿಹೆವು ಕೊಯ್ಗುರಿಗಳಂತೆ ನಾವೆಲ್ಲ I ಬಲಿಯಾಗುತಿಹೆವು ನಿನ್ನ ನಿಮಿತ್ತವೆ ದಿನವೆಲ್ಲ II</verse>
				<verse number="23">ಪ್ರಭೂ, ಎದ್ದೇಳು, ನಿದ್ರಿಸಬೇಡ I ನಮ್ಮನು ಎಂದೆಂದಿಗೂ ತೊರೆಯಬೇಡ II</verse>
				<verse number="24">ಮರೆಸಿಕೊಂಡಿರುವೆಯೇಕೆ ನಿನ್ನ ಮುಖವನು? I ಮರೆತಿರುವೆಯೇಕೆ ನಮ್ಮ ಹಿಂಸೆ ಬಾಧೆಯನು? II</verse>
				<verse number="25">ಮಣ್ಣುಪಾಲಾಗಿದೆ ನಮ್ಮ ಪ್ರಾಣ I ನೆಲ ಕಚ್ಚಿಕೊಂಡಿದೆ ನಮ್ಮ ದೇಹ II</verse>
				<verse number="26">ಎದ್ದು ಬಂದು ಪ್ರಭು ನಿನ್ನ ನೆರವನ್ನೊದಗಿಸು I ನಿನ್ನಚಲ ಪ್ರೇಮದಿಂದ ನಮ್ಮನು ಉದ್ಧರಿಸು II</verse>
			</chapter>
			<chapter number="45">
				<verse number="1">ಉಜ್ವಲಾಲೋಚನೆಯೊಂದು ತುಡುಕುತಿದೆ ಮನದಲಿ I ರಚಿಸಲಿರುವೆ ಮಹಾರಾಜನಿಗೊಂದು ಗೀತಾಂಜಲಿ I ನನ್ನ ಜಿಹ್ವೆ, ಸಜ್ಜಾದ ಬರಹಗಾರನ ಲೇಖನಿ II</verse>
				<verse number="2">ನರಮಾನವರೊಳು ನೀ ಸುರಸುಂದರ I ನಿನ್ನ ಮುಖವಾಣಿ ಅತ್ಯಂತ ಮಧುರ I ದೇವಾನುಗ್ರಹ ನಿನಗಿದೆ ನಿರಂತರ II</verse>
				<verse number="3">ಕಟ್ಟಿಕೋ ಶೂರನೇ, ಪಟ್ಟಗತ್ತಿಯನು ಸೊಂಟಕೆ I ಸಂಭ್ರಮ,‍ ಶೋಭೆ, ಸಡಗರ ಸಲ್ಲತಕ್ಕವು ನಿನಗೆ II</verse>
				<verse number="4">ಹೊರಡು ಒಡ್ಡೋಲಗದಿಂದ ವಾಹನಾರೂಢನಾಗಿ I ತೆರಳು ಭುಜಬಲದಿ ಮಹತ್ಕಾರ್ಯವೆಸಗುವವನಾಗಿ I ಹೆಣಗು ಸತ್ಯಕ್ಕಾಗಿ, ನ್ಯಾಯನೀತಿಪರನಾಗಿ II</verse>
				<verse number="5">ನಿನ್ನಂಬು ಬಾಣಗಳು ಹರಿತವಾದುವು I ರಾಜದ್ರೋಹಿಗಳನು ಅವು ಇರಿಯುವುವು I ಜನಾಂಗಗಳು ನಿನ್ನ ಪಾದಕ್ಕೆರಗುವುವು II</verse>
				<verse number="6">ಅಮರವಾದುದು ಹೇ ದೇವಾ, ನಿನ್ನ ಸಿಂಹಾಸನ I ನ್ಯಾಯಸ್ಥಾಪಕವಾದುದು ನಿನ್ನ ರಾಜದಂಡ II</verse>
				<verse number="7">ಪ್ರೀತಿಸಿದೆ ನೀನು ಧರ್ಮವನು ದ್ವೇಷಿಸಿದೆ ಅಧರ್ಮವನು I ಆನಂದ ತೈಲದಿಂದಭಿಷೇಕಿಸಿಹನು ನಿನ್ನ, ದೇವನು I ಮಿತ್ರರಿಗಿಂತ ಮಿಗಿಲಾಗಿ ಅಭಿಷೇಕಿಸಿಹನು ಆತನು ನಿನ್ನನು II</verse>
				<verse number="8">ಘಮಘಮಿಸುತಿದೆ ನಿನ್ನುಡಿಗೆ ರಸಗಂಧ, ಅಗರು, ಚಂದನಗಳಿಂದ I ಮನರಂಜನೆಗೊಳ್ಳುತಿರುವೆ ದಂತ ಮಂದಿರದುನ್ನತ ವಾದ್ಯಗಳಿಂದ II</verse>
				<verse number="9">ರಾಜಕುವರಿಯರಿಹರು ನಿನ್ನ ಸ್ತ್ರೀ ಪರಿವಾರದಲಿ I ಪಟ್ಟದ ರಾಣಿಯು ನಿಂತಿಹಳು ನಿನ್ನ ಬಲಪಾರ್ಶ್ವದಲಿ I ಓಫಿರ್ ನಾಡಿನ ಚಿನ್ನಾಭರಣಗಳಿಂದ ಭೂಷಿತಳಾಗಿ II</verse>
				<verse number="10">ಎಲೌ ಕುವರಿಯೇ, ಕೇಳು, ಎನ್ನ ಮಾತಿಗೆ ಕಿವಿಗೊಡು I ನಿನ್ನ ಜನರನು, ತೌರು ಮನೆಯನು ಮರೆತುಬಿಡು II</verse>
				<verse number="11">ಆಗ ಬಯಸುವನು ರಾಜ ನಿನ್ನ ಲಾವಣ್ಯವನು I ಆತನ ಪಾದಕ್ಕೆರಗು, ಆತನೇ ನಿನಗೊಡೆಯನು II</verse>
				<verse number="12">ಟೈರ್ ನಾಡಿಗರು ನಿನಗೆ ಕಾಣಿಕೆಯಿತ್ತು ಸನ್ಮಾನಿಸುವರು I ಸಿರಿವಂತ ಪ್ರಜೆಗಳು ನಿನ್ನುಪಕಾರವನು ಕೋರಿಬರುವರು II</verse>
				<verse number="13">ರಾಜಕುವರಿ ವಿರಾಜಿಸುತಿಹಳು ಅಂತಃಪುರದಲಿ I ಮೆರೆಯುತಿಹಳು ಜರತಾರಿ ವಸ್ತ್ರಾಭರಣಗಳಲಿ II</verse>
				<verse number="14">ಭೂಷಿತಳಾಗಿಹಳಾಕೆ ಕಸೂತಿಕೆಲಸದ ವಸ್ತ್ರಗಳಿಂದ I ಬರುತಿಹಳು ರಾಜನ ಬಳಿಗೆ ಸಖಿಯರ ಪರಿವಾರ ಸಮೇತ II</verse>
				<verse number="15">ಆಗಮಿಸುತಿಹರಿದೋ ಸಂಭ್ರಮ ಸಡಗರದಿಂದ I ಪ್ರವೇಶಿಸುತಿಹರು ಅರಮನೆಯನು ಉತ್ಸಾಹದಿಂದ II</verse>
				<verse number="16">ನಿನ್ನ ಪುತ್ರರು ಅಲಂಕರಿಸುವರು ಪೂರ್ವಜರ ಸ್ಥಾನವನು I ನೇಮಕಗೊಳ್ಳುವರು ಉತ್ತರಾಧಿಕಾರಿಗಳಾಗಿ ಜಗದೊಳು II</verse>
				<verse number="17">ನಿನ್ನ ನಾಮಸ್ಮರಣೆಯನುಳಿಸುವೆನು ಚಿರಕಾಲ I ಹೊಗಳುವರು ಸಕಲ ಜನರು ನಿನ್ನನು ಅನುಗಾಲ II</verse>
			</chapter>
			<chapter number="46">
				<verse number="1">ದೇವರೆಮಗೆ ಆಶ್ರಯ ದುರ್ಗ I ಸಂಕಟದಲಿ ಸಿದ್ಧ ಸಹಾಯಕ II</verse>
				<verse number="2">ಕಡಲಲ್ಲಿ ಗುಡ್ಡಗಳು ಮುಳುಗಿದರೂ ದಿಗಿಲಿಲ್ಲ I ಪೊಡವಿ ಕಂಪಿಸಿದರು ನಮಗೇನು ಭಯವಿಲ್ಲ II</verse>
				<verse number="3">ಸಮುದ್ರ ಭೋರ್ಗರೆದರೇನು? ನೊರೆಕಾರಿದರೇನು? I ಅದರೊಡನೆ ಪರ್ವತಗಳು ಅಲುಗಾಡಿದರೇನು? II ನಮ್ಮ ಕಡೆಗಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವನು ನಮಗಾಶ್ರಯ ದುರ್ಗವು II</verse>
				<verse number="4">ನದಿಯೊಂದು ಆನಂದಗೊಳಿಸುವುದು ದೇವನಗರವನು I ಪುನೀತಗೊಳಿಸುವುದು ಪರಾತ್ಪರನ ನಿವಾಸವನು II</verse>
				<verse number="5">ದೇವನಿರುವನಾ ನಗರ ಮಧ್ಯೆ, ಅಳಿವಿಲ್ಲ ಅದಕೆ I ಉದಯಕಾಲದಲೆ ದೇವ ಬರುವನು ಅದರ ಸಹಾಯಕೆ II</verse>
				<verse number="6">ನಡುಗಿದವು ರಾಷ್ಟ್ರಗಳು, ಉಡುಗಿದವು ರಾಜ್ಯಗಳು I ದೇವರ ಗರ್ಜನೆಗೆ ಕರಗಿತು ಧರೆಯೆಲ್ಲವು II</verse>
				<verse number="7">ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದುರ್ಗವು II</verse>
				<verse number="8">ಪ್ರಭುವಿನ ಕಾರ್ಯಗಳ ನೋಡಬನ್ನಿ I ಇಳೆಯೊಳಗೆಸಗಿದ ಪವಾಡಗಳನು ನೋಡಿ II</verse>
				<verse number="9">ಜಗದೆಲ್ಲೆಡೆ ಕದನ ಕಾಳಗ ನಿಲ್ಲಿಸಿಹನು I ಬಿಲ್ಲು ಭಲ್ಲೆಗಳನು ಮುರಿದು ಹಾಕಿದನು I ರಥಗಳನು ಬೆಂಕಿಯಿಂದ ಸುಟ್ಟುಹಾಕಿದನು II</verse>
				<verse number="10">‘ಶಾಂತರಾಗಿರಿ, ತಿಳಿಯಿರಿ ನಾನು ದೇವನೆಂದು I ಜನಕ್ಕೂ ಜನಾಂಗಕ್ಕೂ ನಾನಧಿಪತಿಯೆಂದು’ II</verse>
				<verse number="11">ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದೇವರು II</verse>
			</chapter>
			<chapter number="47">
				<verse number="1">ಸರ್ವ ಜನಾಂಗಗಳೇ, ಚಪ್ಪಾಳೆ ಹೊಡೆಯಿರಿ I ಸರ್ವೇಶ್ವರನಿಗೆ ಜಯಜಯ ಘೋಷ ಮಾಡಿರಿ II</verse>
				<verse number="2">ಪರಾತ್ಪರನಾದ ಪ್ರಭುವು ಘನಗಂಭೀರನು I ಪ್ರಪಂಚಕ್ಕೆಲ್ಲ ರಾಜಾಧಿರಾಜನು II</verse>
				<verse number="3">ಜನಾಂಗಗಳನಾತ ನಮಗಧೀನಪಡಿಸಿಹನು I ರಾಷ್ಟ್ರಗಳನು ನಮಗೆ ಪಾದಪೀಠವಾಗಿಸಿಹನು II</verse>
				<verse number="4">ಆಯ್ದನಾಡನು ಸೊತ್ತಾಗಿ ನೀಡಿದನೆಮಗೆ I ಪ್ರತಿಷ್ಠಿತರು ನಾವು, ಆತನೊಲಿದ ಯಕೋಬಿಗೆ II</verse>
				<verse number="5">ಏರಿದನು ಪ್ರಭು ಜಯಜಯಕಾರದೊಂದಿಗೆ I ಆರೋಹಣವಾದನು ತುತೂರಿನಾದ ಜೊತೆಗೆ II</verse>
				<verse number="6">ಕೀರ್ತಿಸಿರಿ, ನಮ್ಮ ದೇವನನು ಸಂಕೀರ್ತಿಸಿರಿ I ಕೀರ್ತಿಸಿರಿ, ನಮ್ಮ ರಾಜನನು ಸಂಕೀರ್ತಿಸಿರಿ II</verse>
				<verse number="7">ದೇವನು ಭೂಮಂಡಲಕ್ಕೆಲ್ಲಾ ಒಡೆಯನು I ಕೀರ್ತನೆಯಿಂದ ಕೊಂಡಾಡಿರಿ ಆತನನು II</verse>
				<verse number="8">ವಹಿಸಿಕೊಂಡನು ದೇವನು ಸರ್ವಾಧಿಪತ್ಯ I ಅಲಂಕರಿಸಿಹನು ತನ್ನ ಪೂಜ್ಯ ಗದ್ದುಗೆಯ II</verse>
				<verse number="9">ಒಟ್ಟುಗೂಡಿ ಬಂದರು ಪ್ರಜೆಯ ಪ್ರಮುಖರು I ಅಬ್ರಹಾಮನ ದೇವಜನರೊಡನೆ ಸೇರಿಕೊಂಡರು II ಭೂಪಾಲರೆಲ್ಲರೂ ದೇವರಿಗೆ ಅಧೀನರು I ಸರ್ವೋನ್ನತನು, ಸಾರ್ವಭೌಮನು ದೇವರು II</verse>
			</chapter>
			<chapter number="48">
				<verse number="1">ಸರ್ವಸ್ತುತಿಗೆ ಪಾತ್ರ, ಪ್ರಭುವು ಪರಮೋನ್ನತ I ದೇವನಗರದಲಿ ಆತನ ಪವಿತ್ರ ಪರ್ವತ II</verse>
				<verse number="2">ಎತ್ತರದಲಿ ಸುಂದರ, ಉತ್ತರದಲಿ ಸಿಯೋನ್ ಶಿಖರ I ಆನಂದದಾಯಕ ರಾಜಾಧಿರಾಜನ ಆ ನಗರ II</verse>
				<verse number="3">ಅದರ ಕೋಟೆಕೊತ್ತಲಗಳ ನಡುವೆ ದೇವನು I ತಾನೇ ಸುಭದ್ರ ದುರ್ಗವೆಂದು ತೋರಿಹನು II</verse>
				<verse number="4">ಕೂಡಿದರೊಂದಾಗಿ ರಾಜರುಗಳು, ದಾಳಿಮಾಡಬಂದರು I ನೋಡಿ ನಿಬ್ಬೆರಗಾದರು, ತಲ್ಲಣಗೊಂಡು ಓಡಿಹೋದರು II</verse>
				<verse number="5"></verse>
				<verse number="6">ನಡುಗುವಂತಾಯಿತಲ್ಲಿ ಗಡಗಡನೆ I ಪ್ರಸವ ವೇದನೆಯಂತಾಯಿತವರಿಗೆ II</verse>
				<verse number="7">ತಾರ್ಷಿಷ್ ನಾಡಿನ ದೊಡ್ಡ ದೊಡ್ಡ ಹಡಗುಗಳನು I ಚಂಡಮಾರುತದಿಂದ ಪುಡಿಪುಡಿ ಮಾಡಿದೆ ನೀನು II</verse>
				<verse number="8">ಕಿವಿಯಾರೆ ಕೇಳಿದಂತೆಯೆ ಕಣ್ಣಾರೆ ಕಂಡೆವು I ಸರ್ವಶಕ್ತ ಪ್ರಭುವನು ದೇವನಗರದಲಿ ಕಂಡೆವು II</verse>
				<verse number="9">ನಿನ್ನಚಲ ಪ್ರೀತಿಯನು ದೇವಾ, ಸ್ಮರಿಸುವೆವು I ನಿನ್ನ ಮಹದಾಲಯದೊಳು ಅದನು ಧ್ಯಾನಿಸುವೆವು II</verse>
				<verse number="10">ನಿನ್ನ ನಾಮದಂತೆ ನಿನ್ನಾ ಹೊಗಳಿಕೆ I ಮುಟ್ಟುತ್ತದೆ ಜಗದ ಎಲ್ಲೆ ಎಲ್ಲೆಗೆ I ದೇವಾ, ನೀತಿಭರಿತ ನಿನ್ನ ಆಳ್ವಿಕೆ II</verse>
				<verse number="11">ಸಿಯೋನ್ ಪಟ್ಟಣಿಗರು ಹರ್ಷಗೊಳ್ಳಲಿ I ಯೆಹೂದ್ಯ ನಗರಗಳು ಆನಂದಪಡಲಿ I ನಿನ್ನ ನ್ಯಾಯವನು ನೆನಪಿಸಿಕೊಳ್ಳಲಿ II</verse>
				<verse number="12">ಸಂಚಾರಮಾಡಿರಿ ಸಿಯೋನ್ ನಗರದೊಳು I ಮಾಡಿರಿ ಪ್ರದಕ್ಷಿಣೆ ಅದರ ಸುತ್ತಲು I ಲೆಕ್ಕವಿಲ್ಲದಿವೆ ನೋಡಿ ಗೋಪುರಗಳು II</verse>
				<verse number="13">ಕಣ್ಣಿಟ್ಟು ನೋಡಿರಿ ಅದರ ಕೋಟೆಗಳನು I ಚೆನ್ನಾಗಿ ಗಮನಿಸಿರಿ ಅದರ ಪ್ರಾಕಾರಗಳನು II</verse>
				<verse number="14">ಆಗ ತಿಳಿಸಿರಿ ಮುಂದಣ ಪೀಳಿಗೆಗಿಂತೆಂದು - “ಈತನೀತನೇ ನಮ್ಮ ದೇವನು ಯುಗಯುಗಕು I ನಮಗೀತ ಮಾರ್ಗದರ್ಶಕ ತಲತಲಾಂತರಕು” II</verse>
			</chapter>
			<chapter number="49">
				<verse number="1">ಸರ್ವಜನಾಂಗಗಳೆ, ಗಮನಿಸಿರಿ I ಭೂನಿವಾಸಿಗಳೆ, ನನಗೆ ಕಿವಿಗೊಡಿ II</verse>
				<verse number="2">ಜನಸಾಮಾನ್ಯರೆ, ಜನಾಧಿಪತಿಗಳೆ, ದರಿದ್ರರೆ, ಧನವಂತರೆ I ನೀವೆಲ್ಲರು ನನ್ನ ಮಾತುಗಳಿಗೆ ಕಿವಿಗೊಟ್ಟು ಆಲಿಸಿರೈ II</verse>
				<verse number="3">ನನ್ನ ಬಾಯಿ ಬೋಧಿಸುವುದು ಸುಜ್ಞಾನವನು I ನನ್ನ ಮನ ಧ್ಯಾನಿಸುವುದು ವಿವೇಚನೆಯನು II</verse>
				<verse number="4">ನಾ ಕಿವಿಗೊಟ್ಟು ಆಲಿಸುವೆನು ಧರ್ಮದ ಗಾದೆಯನು I ವೀಣೆ ನುಡಿಸುತ ವಿವರಿಸುವೆನು ಅದರ ಗೂಡಾರ್ಥವನು II</verse>
				<verse number="5">ಆಪತ್ಕಾಲದಲಿ ನಾನೇಕೆ ಭಯಪಡಬೇಕು? I ದ್ವೇಷಿಗಳ ದಾಳಿಗೆ ನಾನೇಕೆ ಹೆದರಬೇಕು? II</verse>
				<verse number="6">ಅವರ ಭರವಸೆ ಸಿರಿಸಂಪತ್ತಿನಲಿ I ಅವರ ಹಿರಿಮೆ ಅಧಿಕಾಸ್ತಿಪಾಸ್ತಿಯಲಿ II</verse>
				<verse number="7">ತನ್ನನು ತಾನೇ ಮುಕ್ತಗೊಳಿಸಿಕೊಳ್ಳುವ ಜೀವಾತ್ಮನಿಲ್ಲ I ದೇವರಿಗೆ ಈಡುಕೊಟ್ಟು ಪ್ರಾಣ ಉಳಿಸಿಕೊಳ್ಳಬಲ್ಲ ನರನಿಲ್ಲ II</verse>
				<verse number="8">ಪ್ರಾಣಕೆ ತೆರಬೇಕಾದ ಈಡು ಅಮೂಲ್ಯ I ಅದಕೆ ಸಾಕಷ್ಟು ತೆರಲು ಯಾರಿಗೂ ಅಸಾಧ್ಯ II</verse>
				<verse number="9">ಸಮಾಧಿಗಿಳಿಯದೆ ಸದಾ ಬಾಳುವ ಬಯಕೆ I ಮಾನವ ಶಕ್ತಿಗೆ ಮೀರಿದುದು ಆ ಗಳಿಕೆ II</verse>
				<verse number="10">ಬುದ್ಧಿಜೀವಿಗಳೂ ಸಾಯುವುದು ಖಂಡಿತ I ಮೂರ್ಖ, ಮಂದಗತಿಗಳ ಅಳಿವೂ ನಿಶ್ಚಿತ I ಅವರ ಸೊತ್ತು ಪರರ ಪಾಲು, ಇದೂ ಖಚಿತ II</verse>
				<verse number="11">ತಮ್ಮ ಹೆಸರಲೆಸ್ಟೋ ಸೊತ್ತಿದ್ದರೂ I ಸಮಾಧಿಯೇ ಅವರಿಗೆ ಶಾಶ್ವತ ಮಂದಿರವು I ಅದುವದುವೇ ಅವರಿಗೆ ನಿತ್ಯ ನಿವಾಸವು II</verse>
				<verse number="12">ನೆಲೆಯಾಗಿರನು ನರನು ಪಟ್ಟಪದವಿಯಲಿ I ನಾಶವಾಗುವನು ಪಶುಪ್ರಾಣಿಗಳ ಪರಿ II</verse>
				<verse number="13">ಮೂಢನಂಬಿಕೆಯುಳ್ಳವರ ಗತಿ ಇದುವೇ I ಆ ಮೂಢರ ನಂಬಿ ನಡೆದವರಿಗು ಹಾಗೆಯೇ II</verse>
				<verse number="14">ದೂಡುವನು ಅವರನು ಕುರಿಹಿಂಡಿನಂತೆ ಪಾತಾಳಕೆ I ಮರಣವೇ ಕುರಿಗಾಹಿ ಆ ನಿಧನ ನಿವಾಸಿಗಳಿಗೆ I ವಿನಾಶಗೊಳ್ವುದು ಆ ತಳದಲ್ಲಿ ಅವರ ರೂಪರೇಖೆ I ಆಳುವರು ಸಜ್ಜನರು ಅವರೆಲ್ಲರನು ಉದಯಕಾಲಕೆ II</verse>
				<verse number="15">ನನ್ನನ್ನಾದರೊ ಸ್ವಾಗತಿಸುವನು ದೇವನು I ಪಾತಾಳದ ಹಿಡಿತದಿಂದ ಬಿಡಿಸುವನು II</verse>
				<verse number="16">ಒಬ್ಬನು ಧನಿಕನಾದಾಗ ನೀ ಕಳವಳಗೊಳ್ಳಬೇಡ I ಅವನ ಮನೆಯ ಸೊಬಗನು ಕಂಡು ನಿರಾಶೆಗೊಳ್ಳಬೇಡ II</verse>
				<verse number="17">ಸಾಯುವಾಗ ಏನನೂ ಕೊಂಡು ಹೋಗುವುದಿಲ್ಲ I ಘನತೆ ಅವನ ಬೆನ್ನು ಹತ್ತಿ ಹೋಗುವಂತಿಲ್ಲ II</verse>
				<verse number="18">ಸಿರಿಬಂದಾಗ ಕೊರತೆಯಿರದು ಹೊಗಳಿಕೆಗೆ I ಆತ್ಮಸ್ತುತಿ, ಮುಖಸ್ತುತಿ, ಇವುಗಳ ಮೆರೆತಕೆ II</verse>
				<verse number="19">ಸೇರದಿರನಾತ ಪಿತೃಗಳಧೋಗತಿಯನು I ಅವಿವೇಕಿ ಕಾಣನು ಎಂದಿಗೂ ಪರಂಜ್ಯೋತಿಯನು II</verse>
				<verse number="20">ನೆಲೆಯಾಗಿರನು ಪಟ್ಟಪದವಿಯಲಿ I ನಾಶವಾಗುವನು ಪಶುಪ್ರಾಣಿಗಳ ಪರಿ II</verse>
			</chapter>
			<chapter number="50">
				<verse number="1">ದೇವಾಧಿದೇವನಾದ ಪ್ರಭುವಿನ ನುಡಿ ಇಡೀ ಜಗಕೆ I ಆತನ ಸನ್ನಿಧಿಗೆ ಕರೆ, ಪೂರ್ವದಿಂದ ಪಶ್ಚಿಮದವರೆಗೆ II</verse>
				<verse number="2">ಸುರಸುಂದರವಾದ ಸಿಯೋನಿನಿಂದ I ಉದಯಸಿಹನು ದೇವನು ಶೋಭೆಯಿಂದ II</verse>
				<verse number="3">ಬರುತಿಹನು ನಮ್ಮ ದೇವನು, ಇನ್ನು ಸುಮ್ಮನಿರನಾತ I ಆತನ ಮುಂದೆ ಬೆಂಕಿಮಳೆ, ಸುತ್ತಲು ಚಂಡಮಾರುತ II</verse>
				<verse number="4">ಭೂಮ್ಯಾಕಾಶಗಳನು ಕರೆಯುತಿಹನು I ಪ್ರಜೆಗೆ ವಿಧಿಪಾ ತೀರ್ಪನು ನೋಡಲೆಂದು II</verse>
				<verse number="5">“ಬಲಿ ಮೂಲಕ ಒಡಂಬಡಿಕೆ ಗೈದ ಭಕ್ತರನು I ಸಭೆ ಸೇರಿಸಿ ಇಲ್ಲೆನ್ನ ಮುಂದೆ,” ಎನ್ನುತಿಹನು II</verse>
				<verse number="6">ದೇವನೇ ಸತ್ಯಸ್ವರೂಪಿ, ನ್ಯಾಯಾಧಿಪತಿ I ಇದನು ಸಾರಿ ಹೇಳಲಿ ಆಕಾಶ ಪ್ರಕೃತಿ II</verse>
				<verse number="7">“ಎಲೈ ಪ್ರಜೆ ಇಸ್ರಯೆಲ್, ನಾನು ನಿನ್ನ ದೇವರು I ಕಿವಿಗೊಟ್ಟು ಆಲಿಸು ನಾನು ನಿನ್ನ ವಿರುದ್ಧ ವಾದಿಸುವುದನು II</verse>
				<verse number="8">ನಿನ್ನ ಬಲಿಯರ್ಪಣೆಯನು ನಾ ತಪ್ಪೆಣಿಸುತಿಲ್ಲ I ನನ್ನ ಮುಂದಿವೆ ಸತತ ನಿನ್ನ ದಹನಬಲಿಗಳೆಲ್ಲ II</verse>
				<verse number="9">ನಾ ಕೋರುವುದು ನಿನ್ನ ಮನೆಯ ಹೋರಿಗಳನಲ್ಲ I ನಾ ಬಯಸುವುದು ನಿನ್ನ ಮಂದೆಯ ಹೋತಗಳನಲ್ಲ II</verse>
				<verse number="10">ಕಾಡಿನಲ್ಲಿರುವ ಮೃಗಜಂತುಗಳೆಲ್ಲ ನನ್ನವೆ I ಗುಡ್ಡದಲ್ಲಿರುವ ಸಹಸ್ರಾರು ಪಶುಗಳು ನನ್ನವೆ II</verse>
				<verse number="11">ನಾ ಬಲ್ಲೆ ಆಕಾಶದಲ್ಲಿ ಹಾರಾಡುವ ಪಕ್ಷಿಗಳನ್ನೆಲ್ಲ I ನನಗೆ ಸೇರಿವೆ ಅಡವಿಯಲಿ ಓಡಾಡುವ ಜೀವಜಂತುಗಳೆಲ್ಲ II</verse>
				<verse number="12">ನನಗೆ ಹಸಿವಾದರೆ, ನಿಮಗೆ ತಿಳಿಸಬೇಕಿಲ್ಲ I ಜಗವು, ಅದರದೆಲ್ಲವು ನನ್ನವಾಗಿವೆಯಲ್ಲಾ II</verse>
				<verse number="13">ಹೋರಿಗಳ ಮಾಂಸವನು ನಾ ಭುಜಿಸುವುದುಂಟೆ? I ಹೋತಗಳ ರಕ್ತವನು ನಾ ಕುಡಿಯುವುದುಂಟೇ? II</verse>
				<verse number="14">ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ I ಪರಾತ್ಪರನಿಗೆ ಮಾಡಿದ ಹರಕೆಗಳು ಸಮರ್ಪಿತವಾಗಲಿ II</verse>
				<verse number="15">ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II</verse>
				<verse number="16">ದುರ್ಜನರಿಗೆ ದೇವ ಹೇಳುವನು ಇಂತೆಂದು I “ನನ್ನ ವಿಧಿಗಳ ಪಠಿಸುವ ಹಕ್ಕು ನಿಮಗೆಂತು? I ನನ್ನ ನಿಬಂಧನೆಗಳ ನೀವು ಜಪಿಸುವುದೆಂತು?” II</verse>
				<verse number="17">ನನ್ನ ಮಾತುಗಳನು ನೀವು ತಾತ್ಸಾರ ಮಾಡುತ್ತೀರಿ I ನನ್ನ ತಿದ್ದುಪಾಟುಗಳನು ನೀವು ಧಿಕ್ಕರಿಸುತ್ತೀರಿ II</verse>
				<verse number="18">ಕಂಡೊಡನೆ ಬೇಕು ನಿಮಗೆ ಚೋರರ ಕೂಟ I ಸಾಕಾಗಿಲ್ಲ ನಿಮಗೆ ಜಾರರ ಒಡನಾಟ II</verse>
				<verse number="19">ನಿಮ್ಮ ಬಾಯನ್ನಾಳುತ್ತದೆ ಕೆಡುಕುತನ I ನಿಮ್ಮ ನಾಲಿಗೆ ನೇಯುತ್ತದೆ ಕಪಟತನ II</verse>
				<verse number="20">ಸೋದರನಿಗೆ ವಿರುದ್ಧ ಸುಳ್ಳಾಡಲು ಕೂರುತ್ತೀರಿ I ಒಡಹುಟ್ಟಿದವರಿಗೆ ಎದುರಾಗಿ ಚಾಡಿಹೇಳುತ್ತೀರಿ II</verse>
				<verse number="21">ನೀವಿದನ್ನೆಲ್ಲ ಮಾಡಿದರೂ ನಾ ಮೌನಿಯೆನ್ನುವಿರಾ? I ನಾ ಕೂಡ ನಿಮ್ಮಂಥವನು ಎಂದುಕೊಂಡಿರಾ? II ನಿಮ್ಮ ದುಷ್ಟತನವನು ಕಣ್ಮುಂದೆಯಿಡುವೆನು I ನೀವು ಅಪರಾಧಿಗಳೆಂದು ಸ್ಥಾಪಿಸದೆಬಿಡೆನು II</verse>
				<verse number="22">ದೇವನ ನೆನೆಯದವರೇ, ನೀಡಿರಿ ಗಮನವನು I ಇಲ್ಲವಾದರೆ ಛಿನ್ನಛಿನ್ನವಾಗಿಸಿಬಿಟ್ಟೇನು I ನನ್ನ ಕೈಯಿಂದ ತಪ್ಪಿಸುವವರಾರು ನಿಮ್ಮನು? II</verse>
				<verse number="23">ಧನ್ಯವಾದದ ಬಲಿಯನರ್ಪಿಸುವವನೇ ನನಗೆ ಸನ್ಮಾನಿತನು I ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು II</verse>
			</chapter>
			<chapter number="51">
				<verse number="1">ಕೃಪಾಳು, ದೇವಾ, ಕರುಣಿಸೆನ್ನನು I ಕರುಣಾನಿಧಿ, ಅಳಿಸೆನ್ನ ದೋಷವನು II</verse>
				<verse number="2">ತೊಳೆ ಪೂರ್ತಿಯಾಗಿ ಪಾಪದಿಂದೆನ್ನನು I ದೋಷಪರಿಹರಿಸಿ ಶುದ್ಧಗೊಳಿಸೆನ್ನನು II</verse>
				<verse number="3">ಒಪ್ಪಿಕೊಂಡೆನಿದೋ, ನಾನೇ ಅಪರಾಧಿ I ಕಟ್ಟಿದಂತಿದೆ ಕಣ್ಗೆ ಪಾಪ ದಿನವಿಡಿ II</verse>
				<verse number="4">ಹೌದು ದೇವಾ, ನಿನಗೆ ದ್ರೋಹವೆಸಗಿದೆ I ನಿನ್ನ ಕಣ್ಗೆ ಕೆಟ್ಟದುದನೆ ಮಾಡಿದೆ II ನಿನ್ನ ನಿರ್ಣಯವು ನ್ಯಾಯಯುತ I ನೀ ನೀಡುವ ತೀರ್ಪು ನಿರ್ಲಿಪ್ತ II</verse>
				<verse number="5">ನಾ ಜನಿಸಿದೆ ಪಾಪಪಂಕದಲೆ I ದ್ರೋಹಿ ನಾ ಮಾತೃಗರ್ಭದಿಂದಲೆ II</verse>
				<verse number="6">ಅಂತರಂಗ ಶುದ್ಧಿಯನು ನೀ ಬಯಸುತಿ I ಅಂತರ್ಯ ಜ್ಞಾನವನು ಉದಯಗೊಳಿಸುತಿ II</verse>
				<verse number="7">ಹಿಸ್ಸೋಪಿನಿಂದ ನೀ ಚಿಮುಕಿಸೆ, ನಾ ಶುದ್ಧನಾಗುವೆ I ನೀ ತೊಳೆದೆಯಾದರೆ, ಹಿಮಕ್ಕಿಂತ ನಾ ಬೆಳ್ಳಗಾಗುವೆ II</verse>
				<verse number="8">ಹರ್ಷಾನಂದವನು ಮೊಳಗಿಸೆನ್ನೊಳು I ಪುಳಕಗೊಳ್ಳುವುವು ನೀ ಮುರಿದೆಲುಬುಗಳು II</verse>
				<verse number="9">ನನ್ನ ಪಾಪದೋಷಕೆ ವಿಮುಖನಾಗು I ಸರ್ವದ್ರೋಹಗಳನು ಅಳಿಸಿಹಾಕು II</verse>
				<verse number="10">ಶುದ್ಧ ಹೃದಯವನು ದೇವಾ, ನಿರ್ಮಿಸು I ಅಂತರಂಗವನು ಚೇತನಗೊಳಿಸು II</verse>
				<verse number="11">ತಳ್ಳಬೇಡೆನ್ನನು ದೇವಾ, ನಿನ್ನ ಸನ್ನಿಧಿಯಿಂದ I ದೂಡಬೇಡ ನಿನ್ನ ಪವಿತ್ರಾತ್ಮನನು ನನ್ನಿಂದ II</verse>
				<verse number="12">ಜೀವೋದ್ಧಾರವನು ಮರಳಿ ಸವಿಯುವಂತೆ ಮಾಡು I ವಿಧೇಯನಾಗಿ ನಡೆವ ಸಿದ್ಧಮನಸ್ಸನು ನೀಡು II</verse>
				<verse number="13">ಬೋಧಿಸುವೆನಾಗ ನಿನ್ನ ಮಾರ್ಗವನು ದುರುಳರಿಗೆ I ತಿರುಗಿಕೊಳ್ವರಾಗ ದ್ರೋಹಿಗಳು ನಿನ್ನ ಕಡೆಗೆ II</verse>
				<verse number="14">ತಪ್ಪಿಸೆನ್ನನು ಸ್ವಾಮಿ ದೇವಾ, ರಕ್ತಾಪರಾಧದಿಂದ I ನಿನ್ನ ಸತ್ಯಸಂಧತೆಯನು ಸಾರುವೆ ಮುಕ್ತಕಂಠದಿಂದ II</verse>
				<verse number="15">ತೆರೆವಂತೆ ಮಾಡು ಪ್ರಭು ನನ್ನ ತುಟಿಗಳನು I ಸಾರುವುದೆನ್ನ ಬಾಯಿ ನಿನ್ನ ನುಡಿಗಳನು II</verse>
				<verse number="16">ಬಲಿಯರ್ಪಣೆಯಲಿ ನಿನಗೊಲವಿಲ್ಲ I ದಹನ ಬಲಿಯಿತ್ತರು ನಿನಗೆ ಬೇಕಿಲ್ಲ II</verse>
				<verse number="17">	ಮುರಿದ ಮನವೇ ದೇವನೊಲಿವ ಯಜ್ಞವು I ನೊಂದು ಬೆಂದ ಮನವನಾತ ಒಲ್ಲೆಯೆನನು II</verse>
				<verse number="18">ಸಿಯೋನಿಗೆ ದೇವಾ, ಶುಭವನು ಕರುಣಿಸು I ಜೆರುಸಲೇಮ್ ಕೋಟೆಯನು ಮರಳಿ ಎಬ್ಬಿಸು II</verse>
				<verse number="19">ಸೂಕ್ತ ಬಲಿಗಳಿಂದಾಗ ನಿನ್ನನೊಲಿಸುವರು I ವೇದಿಕೆ ಮೇಲೆ ಯಜ್ಞಪಶುಗಳನು ಅರ್ಪಿಸುವರು II</verse>
			</chapter>
			<chapter number="52">
				<verse number="1">ನೀಚಕಾರ್ಯವೆಸಗಿ ಹಿಗ್ಗುವ ಘನ ಮಾನವನೆ I ದೇವರ ಅನಂತ ಕೃಪೆಯನು ಪ್ರತಿಭಟಿಸುವವನೆ I ದೇವರ ದೃಷ್ಟಿಯಲಿ ನೀನು ಹೀನಾಯನೆ II</verse>
				<verse number="2">ಕ್ಷೌರಗತ್ತಿಗೂ ಹರಿತ ನಿನ್ನ ನಾಲಿಗೆ, ವಂಚಕನೆ I ಕಲ್ಪಿಸುವೆಯಾ ದಿನವೆಲ್ಲಾ ನಾಶವಿನಾಶವನೆ? II</verse>
				<verse number="3">ಒಳಿತಿಗಿಂತ ಕೆಡಕು ಮಾಡುವುದು ನಿನಗಿಷ್ಟ I ಸತ್ಯಕ್ಕಿಂತ ಸುಳ್ಳಾಡುವುದೇ ನಿನ್ನ ಚಟ II</verse>
				<verse number="4">ಓ ನಾಲಿಗೆಯೇ, ನೀನು ಕಪಟ I ಹಾನಿಕರ ಮಾತೇ ನಿನಗಪ್ಪಟ II</verse>
				<verse number="5">ನಸುಕುವನು ದೇವರು ನಿನ್ನನು ನಿರುತ I ದೂರಮಾಡುವನು ನಿನ್ನಾ ಗುಡಾರದಿಂದ I ಕಿತ್ತೆಸೆದುಬಿಡುವನು ಜೀವದ ನಾಡಿಂದ II</verse>
				<verse number="6">ಸಜ್ಜನರು ಚಕಿತರಾಗುವರು ಕಂಡಿದನು I “ದೇವರನು ಆಶ್ರಯಿಸಿಕೊಳ್ಳದವನಿವನು I ಸಿರಿ ಸಂಪತ್ತಿನಲೆ ಭರವಸೆಯಿಟ್ಟವನು I ತುಚ್ಛಕಾರ್ಯಗಳಲೆ ಹೆಚ್ಚಳಪಟ್ಟವನು” I ಎಂದು ಜರೆದು ಮಾಡುವರು ಪರಿಹಾಸ್ಯವನು II</verse>
				<verse number="7"></verse>
				<verse number="8">ನಾನಾದರೋ ದೇಗುಲದಲಿ ಬೆಳೆದಿಹ ಎಣ್ಣೆಮರದಂತಿರುವೆನು I ದೇವರ ಸ್ಥಿರಪ್ರೀತಿಯನು ಯುಗಾಂತರಕು ನಂಬಿಕೊಂಡಿರುವೆನು II</verse>
				<verse number="9">ನಿನ್ನುಪಕಾರವನು ಹೇ ದೇವಾ, ನಾ ಸದಾ ಸ್ಮರಿಸುವೆನು I ನಿನ್ನ ಶ್ರೇಷ್ಠ ನಾಮವನು ಭಕ್ತರ ಮುಂದೆ ಸ್ತುತಿಸುವೆನು II</verse>
			</chapter>
			<chapter number="53">
				<verse number="1">ಮನದಲಿ “ದೇವನಿಲ್ಲ” ಎನ್ನುವವರು ದುರ್ಮತಿಗಳು I ಹೇಯಕೃತ್ಯವೆಸಗುವವರು ಆ ಭ್ರಷ್ಟಾಚಾರಿಗಳು I ಒಳಿತನ್ನು ಮಾಡುವವರಾರೂ ಇಲ್ಲ ಅವರೊಳು II</verse>
				<verse number="2">ಮಾನವರನು ದೇವ ಸ್ವರ್ಗದಿಂದ ಸಮೀಕ್ಷಿಸುತಿಹನು I ತನ್ನನು ಅರಸುವ ಸನ್ಮತಿಗಳಾರೆಂದು ವೀಕ್ಷಿಸುತಿಹನು II</verse>
				<verse number="3">ಒಳಿತನೆಸಗುವವರು ಒಬ್ಬರೂ ಇಲ್ಲ I ದ್ರೋಹಿಗಳು, ದುಷ್ಕರ್ಮಿಗಳು ಅವರೆಲ್ಲ II</verse>
				<verse number="4">ದುರ್ಜನರು ನನ್ನ ಜನರನು ಕೂಳಿನಂತೆ ನುಂಗುವುದೇಕೆ? I ದೇವರನು ನೆನೆಯದಾ ದುಷ್ಕರ್ಮಿಗಳಿಗೆ ಅರಿವಿಲ್ಲವೇಕೆ? II</verse>
				<verse number="5">ದಿಗ್ಭ್ರಾಂತರಾಗುವರಿದೋ ಹಿಂದೆಂದು ಇಲ್ಲದಂತೆ ದುರುಳರು I ದೇವರಿಂದ ತಿರಸ್ಕೃತವಾದ ಅವರು ಪರಾಜಿತರಾಗುವರು I ದಿಕ್ಕುಪಾಲಾಗುವುವು ನಿಮ್ಮ ಮೇಲೆ ಬಿದ್ದವರ ಮೂಳೆಗಳು II</verse>
				<verse number="6">ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ I ತರಲಿ ದೇವರು ತನ್ನ ಪ್ರಜೆಗೆ ಮರಳಿ ಸಿರಿಸಂಪದ I ನೀಡಲಿ ಯಕೋಬ ಮೇಣ್ ಇಸ್ರಯೇಲ ಜನತೆಗೆ ಹರ್ಷಾನಂದ II</verse>
			</chapter>
			<chapter number="54">
				<verse number="1">ರಕ್ಷಿಸೆನ್ನನು ದೇವ, ನಿನ್ನ ನಾಮ ಶಕ್ತಿಯಿಂದ I ನ್ಯಾಯ ದೊರಕಿಸೆನಗೆ ನಿನ್ನ ಪರಾಕ್ರಮದಿಂದ II</verse>
				<verse number="2">ನನ್ನ ಪ್ರಾರ್ಥನೆಯನು ಆಲಿಸಯ್ಯಾ I ನನ್ನ ಮಾತುಗಳಿಗೆ ಕಿವಿಗೊಡು ದೇವಾ II</verse>
				<verse number="3">ಗರ್ವಿಗಳು ನಿಂತಿಹರು ನನಗೆದುರಾಗಿ I ಕ್ರೂರಿಗಳು ಕಾದಿಹರೆನ್ನ ಕೊಲೆಗಾಗಿ I ಅವರಲಿಲ್ಲ ಮಾನ್ಯತೆ ದೇವರಿಗಾಗಿ II</verse>
				<verse number="4">ನನಗಿದೋ ದೇವನೆ ಸಹಾಯಕನು I ಆತನೆನಗೆ ಜೀವಪೋಷಕನು II</verse>
				<verse number="5">ತಿರುಗುಬಾಣವಾಗಲಿ ಶತ್ರುಗಳೆನಗೆ ಬಯಸುವ ಕೇಡು I ಸತ್ಯಸ್ವರೂಪಿಯಾದ ನೀನು ಅವರನು ನಾಶಮಾಡು II</verse>
				<verse number="6">ಸರ್ವಾಪತ್ತುಗಳಿಂದ ತಪ್ಪಿಸಿದೆ ಪ್ರಭು, ನನ್ನನು I ಕಂಡಿವೆ ನನ್ನ ಕಣ್ಗಳೇ ಶತ್ರುಗೊದಗಿದ ಸೋಲನು II</verse>
				<verse number="7">ಎಂತಲೆ ಸ್ವಂತ ಇಚ್ಛೆಯಿಂದ ಬಲಿಯನರ್ಪಿಸುವೆ ನಿನಗೆ I ಧನ್ಯವಾದ ಪ್ರಭು, ನಿನ್ನ ಸರ್ವೋತ್ತಮ ನಾಮಕೆ II</verse>
			</chapter>
			<chapter number="55">
				<verse number="1">ಹೇ ದೇವಾ, ಕಿವಿಗೊಡು ನನ್ನ ಪ್ರಾರ್ಥನೆಗೆ I ವಿಮುಖನಾಗಬೇಡ ನನ್ನ ವಿಜ್ಞಾಪನೆಗೆ II</verse>
				<verse number="2">ನನ್ನ ಮನವಿಯನಾಲಿಸು, ದಯಪಾಲಿಸು ಸದುತ್ತರವನು I ಚಿಂತಾಕ್ರಾಂತನಾದ ನಾನು ಪ್ರಲಾಪಿಸುತ್ತಿರುವೆನು II</verse>
				<verse number="3">ಶತ್ರುಗರ್ಜನೆಯಿಂದ, ದುರುಳರ ಹಿಂಸೆಯಿಂದ I ಅವರೆನಗೆ ಬರಮಾಡಿರುವ ಆತಂಕದಿಂದ I ದ್ವೇಷಿಸುತಿಹರೆನ್ನನು ಕೋಪಾವೇಶದಿಂದ II</verse>
				<verse number="4">ನನ್ನ ಹೃದಯವು ನೊಂದು ಬೆಂದಿದೆ I ಮರಣ ಭಯವು ಆವರಿಸಿಕೊಂಡಿದೆ II</verse>
				<verse number="5">ನಡುಗುತ್ತಿರುವೆ ಭಯದಿಂದ I ಕುಸಿಯುತ್ತಿರುವೆ ದಿಗಿಲಿನಿಂದ II</verse>
				<verse number="6">‘ಆಹಾ ರೆಕ್ಕೆಗಳು ನನಗಿತ್ತಾದರೆ ಪಾರಿವಾಳದಂತೆ I ಹಾರಿ ಹೋಗಿ ನೆಮ್ಮದಿಯಿಂದಿರಬಹುದಿತ್ತು’ ಎನ್ನುತ್ತಿದ್ದೆ II</verse>
				<verse number="7">ದೂರ, ಬಲುದೂರ ಹಾರಿ ಹೋಗುತ್ತಿದ್ದೆ I ನಿರ್ಜನ ಪ್ರದೇಶದಲಿ ವಾಸಿಸುತ್ತಿದ್ದೆ II</verse>
				<verse number="8">ಹುಡುಕುತ್ತಿದ್ದೆ ನಾ ಗೂಡನು ತವಕದಿಂದ I ಪಾರಾಗುತ್ತಿದ್ದೆ ಬಿರುಗಾಳಿ ಮಳೆಯಿಂದ II</verse>
				<verse number="9">ಭ್ರಾಂತಗೊಳಿಸು ಶತ್ರುವನು, ಗಲಿಬಿಲಿಗೊಳಿಸು ಅವರ ನುಡಿಯನು I ನಗರದಲಿ ನಾ ಕಾಣುತ್ತಿರುವೆ ಪ್ರಭೂ, ಹಿಂಸೆ ಕಲಹವನು II</verse>
				<verse number="10">ಗೋಡೆ ಸುತ್ತಲೂ ತಿರುಗುತಿಹರವರು ಹಗಲಿರುಳು I ನಗರದೊಳಗೆ ತುಂಬಿವೆ ಅಕ್ರಮ ಅನಾಚಾರಗಳು II</verse>
				<verse number="11">ಅದರ ಮಧ್ಯೆಯೇ ಇವೆ ವಿನಾಶಕರ ಶಕ್ತಿಗಳು I ಅದರ ಬೀದಿಬಿಟ್ಟು ತೊಲಗವು ಮೋಸ ವಂಚನೆಗಳು II</verse>
				<verse number="12">ನಾ ಸಹಿಸಿಕೊಳ್ಳುತ್ತಿದ್ದೆ ದೂಷಿಸುವವನು ಶತ್ರುವಾಗಿದ್ದರೆ I ನಾನವಿತುಕೊಳ್ಳುತ್ತಿದ್ದೆ ದ್ವೇಷಿಸುವವನು ವೈರಿಯಾಗಿದ್ದರೆ II</verse>
				<verse number="13">ಆದರೆ ಇದನ್ನೆಲ್ಲಾ ನನಗೆ ಮಾಡಿದವನು ನೀನು I ನನಗೆ ಸರಿಯಾದವನು, ಗೆಳೆಯನು, ನನ್ನಾಪ್ತಮಿತ್ರನು II</verse>
				<verse number="14">ತೆರಳಲಿಲ್ಲವೆ ನಾವೀರ್ವರು ದೇವಾಲಯಕೆ I ಭಕ್ತರೊಂದಿಗೆ ಮಧುರ ಸಂಭಾಷಣೆಯೊಂದಿಗೆ? II</verse>
				<verse number="15">ಮರಣ ತಟ್ಟನೆ ಆ ದುಷ್ಟರ ಮೇಲೆರಗಲಿ I ಜೀವಸಹಿತ ಪಾತಾಳಕ್ಕವರು ಇಳಿಯಲಿ I ಕೆಟ್ಟತನ ಮನೆಮಾಡಿದೆ ಅವರ ಮಧ್ಯದಲಿ II</verse>
				<verse number="16">ನಾನಾದರೋ ಮೊರೆಯಿಡುವೆ ದೇವರಿಗೆ I ರಕ್ಷಣೆ ನೀಡದಿರನು ಪ್ರಭು ನನಗೆ II</verse>
				<verse number="17">ತ್ರಿಕಾಲದೊಳು ಗೋಗರೆದು ಯಾಚಿಸುವೆನು I ಎನ್ನಯ ಮೊರೆಗಾತನು ಕಿವಿಗೊಡದಿರನು II</verse>
				<verse number="18">ನನ್ನ ಸುತ್ತಲೂ ಶತ್ರುವ್ಯೂಹವಿರುವಲ್ಲಿ I ರಕ್ಷಿಸುವನೆನ್ನನು ನಾ ನಡೆಸುವ ದಾಳಿಯಲಿ II</verse>
				<verse number="19">ಆದಿಯಿಂದಾಳುವ ದೇವನು ಅವರ ಸೊಕ್ಕಡಗಿಸದೆ ಬಿಡನು I ಪರಿವರ್ತಿಸಲಾಗದು ದೇವಭಯವಿಲ್ಲದವರ ಹೃದಯವನು II</verse>
				<verse number="20">ಮಿತ್ರರ ಮೇಲೆ ಕೈಯೆತ್ತಿರುವನು ಆ ನನ್ನ ಗೆಳೆಯನು I ತಾನು ಮಾಡಿದ ಒಪ್ಪಂದವನು ತಾನೆ ಮೀರಿ ನಡೆದಿಹನು II</verse>
				<verse number="21">ಅವನ ಬಾಯಿ ಬೆಣ್ಣೆಗಿಂತ ನಯ, ಆದರೆ ಹೃದಯ ಕಲಹಭರಿತ I ನುಡಿ ಎಣ್ಣೆಗಿಂತ ನುಣುಪು, ಆದರೆ ಬಿಚ್ಚುಗತ್ತಿಗಿಂತ ಹರಿತ II</verse>
				<verse number="22">ಪ್ರಭುವಿನ ಮೇಲೆ ಹಾಕು ನಿನ್ನ ಚಿಂತಾಭಾರವನು I ಉದ್ಧರಿಸುವನು, ಸಜ್ಜನರನೆಂದಿಗೂ ಕದಲಗೊಡಿಸನು II</verse>
				<verse number="23">ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II</verse>
			</chapter>
			<chapter number="56">
				<verse number="1">ಕರುಣೆತೋರು ದೇವಾ, ಜನರೆನ್ನ ಬೆನ್ನಟ್ಟಿ ಬರುತಿಹರು I ದಿನವೆಲ್ಲ ಕದನ ಮಾಡಿ ಶತ್ರುಗಳೆನ್ನ ಬಾಧಿಸುತಿಹರು II</verse>
				<verse number="2">ವಿರೋಧಿಗಳು ದಿನವಿಡೀ ಬೆನ್ನಟ್ಟಿ ಬರುತಿಹರು I ಸೊಕ್ಕಿನಿಂದ ನನಗೆದುರಾಗಿ ನಿಂತಿರುವರು ಹಲವರು II</verse>
				<verse number="3">ಹೆದರಿಕೆ ಉಂಟಾದಾಗ I ನೀನೆ ನನಗೆ ಆಶ್ರಯ II</verse>
				<verse number="4">ದೇವರಲ್ಲೇ ನಿರ್ಭೀತ ನಂಬಿಕೆ ನನಗೆ I ಹೆಮ್ಮೆ ಪಡುವೆನು ಆತನಿತ್ತ ವಾಗ್ದಾನಕೆ I ನರಮಾನವರು ಏನು ಮಾಡಿಯಾರೆನಗೆ? II</verse>
				<verse number="5">ಸದಾ ಅಪಾರ್ಥ ಕಟ್ಟುವರೆನ್ನ ಮಾತಿಗೆ I ಅವರು ಬಗೆವುದೆಲ್ಲಾ ಕೇಡೇ ನನಗೆ II</verse>
				<verse number="6">ಒಟ್ಟುಗೂಡಿ ಹೊಂಚುಹಾಕುತಿಹರು I ಹೆಜ್ಜೆಹಿಡಿದು ಕೊಲ್ಲ ಬರುತಿಹರು II</verse>
				<verse number="7">ಇಂಥಾ ದ್ರೋಹಿಗಳು ತಪ್ಪಿಸಿಕೊಳ್ಳಬಾರದಯ್ಯಾ I ರೌದ್ರದಿಂದಾ ಜನರನು ನೀ ಕೆಡವಿಬಿಡು ದೇವಾ II</verse>
				<verse number="8">ನನ್ನ ಅಲೆಮಾರಿತನದ ಲೆಕ್ಕವಿಟ್ಟಿರುವೆ ನಿನ್ನಲಿ I ನನ್ನ ಕಣ್ಣೀರನು ತುಂಬಿಡು ನಿನ್ನ ಬುದ್ದಲಿಯಲಿ I ಅದರ ಕತೆ ಬರೆದಿದೆಯಲ್ಲವೆ ನಿನ್ನ ಪುಸ್ತಕದಲಿ? II</verse>
				<verse number="9">ನಾ ಮೊರೆಯಿಟ್ಟಾಗ ಶತ್ರುಗಳು ಪರಾರಿ ಹಿಂದಕೆ I ದೇವನಿರುವುದು ನನ್ನ ಕಡೆ, ಇದು ಗೊತ್ತಿದೆ ನನಗೆ II</verse>
				<verse number="10">ನಾ ಹೆಮ್ಮೆಪಡುವುದು ದೇವನಲಿ, ಆತನ ವಾಗ್ದಾನದಲಿ I ನಾ ಹೆಮ್ಮೆಪಡುವುದು ಪ್ರಭುವಿನಲಿ, ಆತನ ವಾಗ್ದಾನದಲಿ II</verse>
				<verse number="11">ದೇವರಲ್ಲೇ ನಿರ್ಭೀತ ನಂಬಿಕೆ ನನಗೆ I ನರಮಾನವರು ಏನು ಮಾಡಿಯಾರೆನಗೆ II</verse>
				<verse number="12">ನಿನ್ನ ಮುಂದೆ ಜೀವನ್ ಜ್ಯೋತಿಯಲಿ ನಾ ನಡೆಯಮಾಡಿರುವೆ I ಮೃತ್ಯುವಿನಿಂದೆನ್ನ ಪ್ರಾಣವನು ನೀ ಮುಕ್ತಗೊಳಿಸಿರುವೆ I ಜಾರಿ ಬೀಳದಂತೆನ್ನ ಪಾದಗಳನು ಕಾದಿರಿಸಿರುವೆ II ಎಂದೇ ನಿನಗೆ ಹೊತ್ತ ಹರಕೆಗಳನು ಸಲ್ಲಿಸುವೆ I ಕೃತಜ್ಞತಾಬಲಿಗಳನು ದೇವಾ, ನಿನಗರ್ಪಿಸುವೆ II</verse>
			</chapter>
			<chapter number="57">
				<verse number="1">“ಕರುಣಿಸೆನ್ನನು, ಕರುಣಿಸು, ದೇವನೇ I ನನ್ನಾತ್ಮದ ಆಸರೆಯು ನೀನೇ II ನನ್ನ ಗಂಡಾಂತರವು ನೀಗುವ ಪರಿಯಂತ I ನಿನ್ನ ರೆಕ್ಕೆಗಳಡಿ ನಾನಿರುವೆ ಸುರಕ್ಷಿತ II</verse>
				<verse number="2">ನನ್ನ ಕಾರ್ಯವನು ಕೈಗೂಡಿಸುವ ದೇವನಿಗೆ I ನಾ ಮೊರೆಯಿಡುವೆ ಪರಾತ್ಪರನಾದಾ ಕರ್ತನಿಗೆ II</verse>
				<verse number="3">ಆತ ನೆರವಾಗುವನೆನಗೆ ಪರಲೋಕದಿಂದ I ತಪ್ಪಿಸುವನು ನನ್ನನು ಬೆನ್ನಟ್ಟಿ ಬರುವವರಿಂದ II ತೋರ್ಪಡಿಸುವನು ಸತ್ಯತೆಯನು I ತನ್ನ ಅಚಲ ಪ್ರೀತಿಯನಾ ದೇವನು II</verse>
				<verse number="4">ಸಿಕ್ಕಿಕೊಂಡಿರುವೆ ನರಭಕ್ಷಕ ಸಿಂಹಗಳ ನಡುವೆ I ಅವುಗಳ ಹಲ್ಲುಗಳೊ ಭರ್ಜಿಬಾಣಗಳಂತಿವೆ I ನಾಲಿಗೆಗಳು ಹದವಾದ ಕತ್ತಿ ಕಠಾರಿಗಳಂತಿವೆ II</verse>
				<verse number="5">ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಹಿರಿಮೆ I ಭೂಮಂಡಲದಲಿ ಹಬ್ಬಿ ಹರಡಲಿ ನಿನ್ನಾ ಮಹಿಮೆ II</verse>
				<verse number="6">ಕಂಟಕ ಬಂದಿದೆ ನನ್ನ ಪ್ರಾಣಕೆ I ಹಾಕಿಹರು ಕಾಲಿಗೆ ಜೀರುಗುಣಿಕೆ II ತೋಡಿಹರು ಗುಂಡಿಯನು ನಾ ನಡೆವ ದಾರಿಯಲೆ I ತಾವೆ ತಟಕ್ಕನೆ ಬಿದ್ದುಹೋದರು ಅದರಲೆ II</verse>
				<verse number="7">ಸ್ಥಿರವಿದೆ ದೇವಾ, ಸುಸ್ಥಿರವಿದೆ ನನ್ನ ಮನ I ಹಾಡುತ ಪಾಡುತ ನಾ ರಚಿಸುವೆ ಗಾಯನ II</verse>
				<verse number="8">ಚೇತನಗೊಳ್ಳು ಮನವೇ, ಚೇತನಗೊಳ್ಳು I ಎಚ್ಚರಗೊಳ್ಳಲಿ ವೀಣೆ ತಂಬೂರಿಗಳು I ಎಬ್ಬಿಸಿ ರವಿಯನು ಪ್ರಾತಃಕಾಲದೊಳು II</verse>
				<verse number="9">ನಿನ್ನ ಸ್ತುತಿಸುವೆನು ಪ್ರಭು ಜನಾಂಗಗಳ ಮುಂದೆ I ಸಂಕೀರ್ತಿಸುವೆನು ನಿನ್ನನು ರಾಷ್ಟ್ರಗಳ ಮಧ್ಯೆ II</verse>
				<verse number="10">ನಿನ್ನಚಲ ಪ್ರೀತಿ ಮುಟ್ಟುತ್ತಿದೆ ಗಗನಮಂಡಲವನು I ನಿನ್ನ ಸತ್ಯಸಂಧತೆ ತಾಕುತ್ತಿದೆ ಮೇಘಮಂಡಲವನು II</verse>
				<verse number="11">ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಹಿರಿಮೆ I ಭೂಮಂಡಲದಲಿ ಹಬ್ಬಿ ಹರಡಲಿ ನಿನ್ನಾ ಮಹಿಮೆ II</verse>
			</chapter>
			<chapter number="58">
				<verse number="1">ಜನನಾಯಕರೇ, ನ್ಯಾಯಬದ್ಧವೊ ನಿಮ್ಮ ತೀರ್ಪುಗಳು I ವ್ಯಾಜ್ಯಗಳನು ಬಗೆಹರಿಸುತ್ತವೆಯೆ ನಿಮ್ಮ ನಿರ್ಣಯಗಳು? II</verse>
				<verse number="2">ಬದಲಿಗೆ ಕಲ್ಪಿಸುತ್ತೀರಿ ಅಕ್ರಮವನು ಮನದಲಿ I ಧರೆಗೀಯುತ್ತೀರಿ ಹಿಂಸಾಚಾರವನು ತೂಕದಲಿ II</verse>
				<verse number="3">ದುರುಳರು ದಾರಿತಪ್ಪಿದವರು ಉದರದಿಂದಲೆ I ಸಟೆಯಾಡುವ ಅಕ್ರಮಿಗಳವರು ಹುಟ್ಟಿನಿಂದಲೆ II</verse>
				<verse number="4">ಸರ್ಪಗಳಂತಾ ಜನ ವಿಷಭರಿತ I ನಾಗರದಂತೆ ಅವರ ಕಿವಿ ಮಂದ II</verse>
				<verse number="5">ಒಲಿಯದವರ ಕಿವಿ ಪುಂಗಿಯ ನಾದಕೆ I ಮಣಿಯವು ಹಾವಾಡಿಗನ ಮಾಟಕೆ II</verse>
				<verse number="6">ಮುರಿದುಬಿಡು ಹೇ ದೇವಾ, ಆ ದುರುಳರ ಹಲ್ಲುಗಳನು I ಕಿತ್ತುಬಿಡು ಪ್ರಭು, ಆ ಪ್ರಾಯಸಿಂಹಗಳ ಕೋರೆಗಳನು II</verse>
				<verse number="7">ಅವರಾಗಲಿ ಬೇಗನೆ ಕಾಣದೆ ಹೋಗುವ ತೊರೆಯಂತೆ I ನಸುಕಿ ನಾಶವಾಗಲಿ ಪಾದದಡಿ ಸಿಲುಕಿದ ಗರಿಕೆಕಣದಂತೆ II</verse>
				<verse number="8">ನುಸುಳಿ ನುಸುಳಿ ನಶಿಸಿಹೋಗಲಿ ಬಸವನ ಹುಳದಂತೆ I ರವಿಯ ಬೆಳಕನು ಕಾಣದಿರಲಿ ಗರ್ಭವಿಳಿದ ಪಿಂಡದಂತೆ II</verse>
				<verse number="9">ಹಸುರಿರಲಿ ಒಣಗಿರಲಿ, ಒಲೆ ಪಾಲಾಗಲಿ ಮುಳ್ಳಿನಂತೆ I ನಿಶ್ಯೇಷವಾಗಲಿ ದೇವಕೋಪಾಗ್ನಿಗೆ ಸಿಲುಕಿದಂತೆ II</verse>
				<verse number="10">ನಲಿವರು ಸಜ್ಜನರು ಈ ಪ್ರತೀಕಾರ ನೋಟದಲಿ I ಕಾಲುತೊಳೆಯುವರವರು ಆ ದುರ್ಜನರ ನೆತ್ತರಲಿ II</verse>
				<verse number="11">“ನ್ಯಾಯ ನಿರ್ಣಯಿಸುವಂಥ ದೇವನಿಹನು ಜಗದಲಿ I ಸಜ್ಜನರಿಗೆ ಸತ್ಫಲ ಕಟ್ಟಿಟ್ಟ ಬುತ್ತಿ,” ಇದು ನಾಣ್ನುಡಿ II</verse>
			</chapter>
			<chapter number="59">
				<verse number="1">ಶತ್ರುಗಳಿಂದ ದೇವಾ, ತಪ್ಪಿಸು I ಎದುರಾಳಿಗಳಿಂದೆನ್ನ ರಕ್ಷಿಸು II</verse>
				<verse number="2">ಕೇಡಿಗರಿಂದೆನ್ನ ಬಿಡಿಸು I ಕೊಲೆಪಾತಕರಿಂದ ಉಳಿಸು II</verse>
				<verse number="3">ಇಗೋ ನನ್ನ ಪ್ರಾಣಕ್ಕವರು ಹೂಡಿರುವ ಹೊಂಚು I ನನ್ನ ಮೇಲೆರಗಲು ಹೂಡಿರುವ ಕ್ರೂರಿಗಳ ಸಂಚು II</verse>
				<verse number="4">ನಿರಪರಾಧಿ, ನಿರ್ದೋಷಿ ನಾನಾದರು I ಮೇಲೆ ಬೀಳಲಿದೋ ಸಜ್ಜುಗೊಂಡಿಹರು I ಎಚ್ಚೆತ್ತು ಪ್ರಭು, ನನಗೆ ನೆರವಾಗಿರು II</verse>
				<verse number="5">ಇಸ್ರಯೇಲರ ದೇವ, ಸೇನಾಧೀಶ್ವರ ಪ್ರಭು, ನೀನು I ದಂಡಿಸು ನೀನೆಚ್ಚರಗೊಂಡು ಅನ್ಯಜನರೆಲ್ಲರನು I ತೋರಬೇಡ ದುರುಳ ದ್ರೋಹಿಗಳಾರಿಗೂ ದಯೆಯನು II</verse>
				<verse number="6">ಸಂಜೆಯಾದುದೆ ಓಡಿ ಬರುವರು ನಾಯಿಗಳಂತೆI ಗುರುಗುಟ್ಟುತ ಊರ ಸುತ್ತುವರು ಕುನ್ನಿಗಳಂತೆ II</verse>
				<verse number="7">ಅವರ ಬಾಯಿ ಬೊಗಳುವ ಮಾತುಗಳನು ಕೇಳು I ಅವರ ತುಟಿಗಳು ಹರಿತ ಕತ್ತಿಕಠಾರಿಗಳು I ನಮಗಾರು ಕಿವಿಗೊಡರೆಂಬುದೆ ಅವರ ಗೋಳು II</verse>
				<verse number="8">ನೀನಾದರೋ ಪ್ರಭು, ಅವರನು ನೋಡಿ ನಗುವೆ I ಅನ್ಯಜನರನು ಅಪಹಾಸ್ಯಕ್ಕೀಡು ಮಾಡುವೆ II</verse>
				<verse number="9">ನನ್ನ ಶಕ್ತಿಯೇ, ನಿನಗಾಗಿ ನಾ ಕಾದಿರುವೆ I ನನ್ನಾಶ್ರಯ ದುರ್ಗ, ದೇವಾ, ನೀನೇ ಅಲ್ಲವೆ II</verse>
				<verse number="10">ಪ್ರೀತಿಯಿಂದ ನೆರವಾಗುವನು ದೇವನೆನಗೆ I ಶತ್ರುಗಳಿಗಾದ ಸೋಲನು ತೋರಿಸುವನೆನಗೆ II</verse>
				<verse number="11">ಕೊಲಬೇಡಾ ದ್ರೋಹಿಗಳನು ಫಕ್ಕನೆ I ಮರೆತಾರೆನ್ನ ಜನತೆ ಪಾಠ ಕಲಿಯದೆ II ಚದರಿಸು ಶಕ್ತಿಯಿಂದ, ಅಲೆಯಲಿ ದಿಕ್ಕುತೋಚದೆ I ಆ ಪರಿ ತಗ್ಗಿಸು ಅವರನು; ಪ್ರಭು, ನೀಡೆನಗೆ ರಕ್ಷೆ II</verse>
				<verse number="12">ಪಾಪವಿದೆ ಬಾಯಲಿ, ದೋಷವಿದೆ ತುಟಿಯಲಿ I ಸುಳ್ಳಿದೆ ಮಾತಲಿ, ಶಾಪವಿದೆ ನುಡಿಯಲಿ I ಅವರ ಸೊಕ್ಕಿನಲಿ ಅವರೇ ಸಿಕ್ಕಬೀಳಲಿ II</verse>
				<verse number="13">ಸುಟ್ಟು ನೀ ಭಸ್ಮಮಾಡು ಕೋಪಾಗ್ನಿಯಿಂದ I ಸ್ಪಷ್ಟವಾಗಲಿ ಇಡೀ ಲೋಕಕ್ಕಿದರಿಂದ I ದೇವನಾಳುತಿಹನೆಂದು ಇಸ್ರಯೇಲಿನಿಂದ II</verse>
				<verse number="14">ಸಂಜೆಯಾದುದೆ ಓಡಿಬರುವರು ನಾಯಿಗಳಂತೆ I ಗುರುಗುಟ್ಟುತ ಊರ ಸುತ್ತುವರು ಕುನ್ನಿಗಳಂತೆ II</verse>
				<verse number="15">ಅನ್ನಕ್ಕಾಗಿ ಅಲೆದಾಡುವರು ಅತ್ತಿತ್ತಾ I ಹೊಟ್ಟೆತುಂಬದಿರೆ ಅಡ್ಡಾಡುವರು ಬೊಗಳುತ್ತಾ II</verse>
				<verse number="16">ನಾನಾದರೊ ಹೊಗಳಿ ಹಾಡುವೆ ದೇವಾ, ನಿನ್ನ ಸಾಮರ್ಥ್ಯವನು I ಉದಯಕಾಲದಲೆ ನಾ ಸಂಕೀರ್ತಿಸುವೆ ನಿನ್ನ ಪ್ರೀತಿ ಪ್ರೇಮವನು I ಸಂಕಟದಲ್ಲೆನಗಾದ ಆಶ್ರಯಗಿರಿ, ದುರ್ಗ, ನೀನಲ್ಲವೇನು? II</verse>
				<verse number="17">ನೀನೆನ್ನ ಶಕ್ತಿದೇವಾ, ನಿನಗೆನ್ನ ಸ್ತುತಿ I ನೀನೆನ್ನ ದುರ್ಗ, ತೋರಿಸು ಎನಗೆ ಪ್ರೀತಿ II</verse>
			</chapter>
			<chapter number="60">
				<verse number="1">ಕೈಬಿಟ್ಟೆ ದೇವಾ, ನಮ್ಮನು ಕೈಬಿಟ್ಟೆ I ಕೋಪದಿಂದೆಮ್ಮನು ತಳ್ಳಿ ಕೆಡವಿಬಿಟ್ಟೆ I ಉದ್ಧಾರವಾಗ್ವೆವು ನೀ ಮರಳಿ ಬೆಂಗೊಡೆ II</verse>
				<verse number="2">ನಾಡನು ನಡುಗಿಸಿ ಬಿಡಿಬಿಡಿಯಾಗಿಸಿದೆ I ಅದರೊಡಕನು ಸರಿಮಾಡು ತಡವರಿಸದೆ II</verse>
				<verse number="3">ನಿನ್ನ ಜನರನು ಗುರಿಪಡಿಸಿದೆ ಸಂಕಟಕೆ I ಭ್ರಮಣಗೊಳಿಪ ಮದ್ಯವ ಕುಡಿಸಿದೆ ನಮಗೆ II</verse>
				<verse number="4">ಪರಾಜಯ ಪತಾಕೆಯ ಹರಿಸಿದೆ ನಿನಗಂಜಿ ನಡೆದವರಿಗೆ I ಅವರು ಹೆದರಿ ಓಡುವಂತೆ ಮಾಡಿದೆ ಬಿಲ್ಲು ಬಾಣಗಳಿಗೆ II</verse>
				<verse number="5">ನಿನಗೆ ಪ್ರಿಯರಾದ ನಮ್ಮ ಮೊರೆಯನಾಲಿಸು I ನಿನ್ನ ಭುಜಬಲದಿಂದ ನಮ್ಮನು ಜಯಗೊಳಿಸು II</verse>
				<verse number="6">ಗರ್ಭಗುಡಿಯಿಂದಲೇ ದೇವನಿಂತೆಂದನು; “ಜಯಶೀಲ ನಾನು, ಹಂಚುವೆನು ಶೆಖೆಮನು I ಅಳೆದು ಕೊಡುವೆನು ಸುಖೋತೆಂಬ ಬಯಲನು II</verse>
				<verse number="7">ಗಿಲ್ಯಾದ ಸೀಮೆ, ಮನಸ್ಸೆ ನಾಡು ನನ್ನವೆ I ಎಫ್ರಯಿಮ್ ಗೋತ್ರವು ಶಿರಸ್ತ್ರಾಣವು ನನಗೆ I ಜೂದ ಕುಲವು ರಾಜದಂಡವು ನನ್ನ ಕೈಗೆ II</verse>
				<verse number="8">ಮೋವಾಬ್ ಪ್ರಾಂತ್ಯವು ನನ್ನ ಸ್ನಾನ ಪಾತ್ರೆಯು I ಎದೋಮ್ ಪ್ರಾಂತ್ಯವು ನನ್ನ ಕೆರಗಳಿಗೆ ಎಡೆಯು I ನನ್ನ ಗೆಲ್ವೆನೆಂದಿತೆ ಫಿಲಿಷ್ಟಿಯ ಪ್ರಾಂತ್ಯವು!” II</verse>
				<verse number="9">ಕೋಟೆಯ ನಗರಕೆ ನನ್ನನು ಕರೆದೊಯ್ಯುವರಾರು? I ಎದೋಮ್ ಪ್ರಾಂತ್ಯಕೆ ನನ್ನ ಕೊಂಡೊಯ್ಯುವವರಾರು? II</verse>
				<verse number="10">ದೇವಾ ನೀ, ನಮ್ಮನು ಕೈ ಬಿಟ್ಟಿರುವುದು ಸರಿಯೋ? I ನಮ್ಮ ಸೈನ್ಯ ಸಮೇತ ನೀ ಬರದೆಹೋದೆಯೋ? II</verse>
				<verse number="11">ಶತ್ರು ವಿರುದ್ಧ ಸಹಾಯಮಾಡಯ್ಯಾ I ಮಾನವ ನೆರವು ನಮಗೆ ವ್ಯರ್ಥವಯ್ಯಾ II</verse>
				<verse number="12">ನಮ್ಮ ಪರ ದೇವನಿರಲು ಹೆಣಗುವೆವು ಶೂರರಾಗಿ I ವೈರಿಗಳನು ತುಳಿದುಬಿಡುವನಾತ ಖರೆಯಾಗಿ II</verse>
			</chapter>
			<chapter number="61">
				<verse number="1">ದೇವಾ ಆಲಿಸೆನ್ನ ಮೊರೆಯನು I ಕಿವಿಗೊಟ್ಟು ಕೇಳೆನ್ನ ಜಪವನು II</verse>
				<verse number="2">ಎದೆಗುಂದಿ ಮೊರೆಯಿಡುತ್ತಿರುವೆ ಜಗದೆಲ್ಲೆಯಿಂದ I ಹತ್ತಲಾಗದ ಆಶ್ರಯಗಿರಿಗೆ ಹತ್ತಿಸೆನ್ನ II</verse>
				<verse number="3">ದೇವಾ, ನೀನೆನಗೆ ಶರಣು ಮಹತ್ತರ I ಶತ್ರುಗೆಟುಕದ ಸುಭದ್ರ ಗೋಪುರ II</verse>
				<verse number="4">ನಿನ್ನ ಗುಡಾರವಾಗಲಿ ನನಗೆ ನಿರಂತರ ಬಿಡಾರ I ನಿನ್ನ ರೆಕ್ಕೆಗಳ ಮರೆಯೆ ನನಗೆ ಆಶ್ರಯದಾಗರ II</verse>
				<verse number="5">ನಾ ಹೊತ್ತ ಹರಕೆಗಳಿಗೆ ದೇವಾ ನೀ ಲಕ್ಷ್ಯವಿತ್ತೆ I ನಿನ್ನ ಭಕ್ತರಿಗೆ ಸಿಗುವ ಭಾದ್ಯತೆಯ ನನಗೂ ಇತ್ತೆ II</verse>
				<verse number="6">ದೀರ್ಘಾಯುಸ್ಸನು ದಯಪಾಲಿಸು ರಾಜನಿಗೆ I ತಲತಲಾಂತರಕು ಉಳಿಯಲಿ ಆತನಾಳ್ವಿಕೆ II</verse>
				<verse number="7">ದೇವರ ಸಾನ್ನಿಧ್ಯದಲಿ ಆತನು ಸದಾ ಸಾಮ್ರಾಜ್ಯವಾಳಲಿ I ನಿನ್ನಯ ಪ್ರೀತಿ ಸತ್ಯತೆಗಳು ಆತನಿಗೆ ಬೆಂಗಾವಲಾಗಿರಲಿ II</verse>
				<verse number="8">ಸಲ್ಲಿಸುವೆನಾಗ ದಿನಬಿಡದೆ ನಿನಗೆ ಹರಕೆಗಳನು I ಸಂಕೀರ್ತಿಸುವೆನು ಸದಾ ನಿನ್ನ ಶ್ರೀನಾಮವನು II</verse>
			</chapter>
			<chapter number="62">
				<verse number="1">ಎನ್ನ ಮನಕ್ಕೆ ಶಾಂತಿ ದೇವನಿಂದಲೆ I ನನ್ನ ಜೀವೋದ್ಧಾರ ಆತನಿಂದಲೆ II</verse>
				<verse number="2">ಆತನೆನಗೆ ದುರ್ಗ, ರಕ್ಷಕ, ಶರಣು I ನಾನೆಂದಿಗೂ ಕದಲಿ ಬೀಳೆನು II</verse>
				<verse number="3">ಎನಿತುಕಾಲ ದಾಳಿ ಮಾಡುವಿರಿ ಒಬ್ಬನ ಮೇಲೆ ನೀವೆಲ್ಲಾ? I ಕೆಡವಲು ಯತ್ನಿಸುವಿರಾ ಬಾಗಿದಾ ಗೋಡೆಯ, ಕುಸಿದಾ ಪೌಳಿಯ? II</verse>
				<verse number="4">ದಬ್ಬುವ ದುರಾಲೋಚನೆ ಅವರದು ಗಾದಿಯಿಂದ I ಅಬದ್ಧವಾಡುವುದೆಂದರೊ ಹಬ್ಬದಾನಂದ I ಹರಸುವರು ಅಧರದಿಂದ, ಶಪಿಸುವರು ಉದರದಿಂದ II</verse>
				<verse number="5">ಎನ್ನ ಮನಕೆ ಶಾಂತಿ ದೇವನಿಂದಲೆ I ನನಗೆ ನಂಬಿಕೆ ನಿರೀಕ್ಷೆ ಆತನಿಂದಲೆ II</verse>
				<verse number="6">ಆತನೆನಗೆ ದುರ್ಗ, ರಕ್ಷಕ, ಶರಣು I ನಾನೆಂದಿಗೂ ಕದಲಿ ಬೀಳೆನು II</verse>
				<verse number="7">ಉದ್ಧಾರಕೆ, ಗೌರವಕೆ ಎನಗಾಧಾರ ದೇವನೆ I ಭದ್ರವಾದ ಬಂಡೆ, ನನಗಾಶ್ರಯ ಆತನೆ II</verse>
				<verse number="8">ಜನರೇ, ಸದಾ ಭರವಸೆ ಇಡಿ ದೇವನಲಿ I ತೋಡಿಕೊಳ್ಳಿ ನಿಮ್ಮ ಅಳಲನು ಆತನಲಿ II</verse>
				<verse number="9">ನರಮಾನವರೆಲ್ಲರು ಬರೇ ಉಸಿರು I ನರಾಧಿಪತಿಗಳು ತೀರಾ ಹುಸಿಯು I ತ್ರಾಸಿನಲಿ ತೂಗಲು ಅವರೆಲ್ಲರು I ಉಸಿರಿಗಿಂತಲೂ ಅತ್ಯಂತ ಹಗುರು II</verse>
				<verse number="10">ಹಿಂಸಾಚಾರದ ಸಂಪಾದನೆಯನು ನೆಚ್ಚಬೇಡಿ I ಸೂರೆಮಾಡಿ ಸೇರಿಕೊಂಡುದನು ಕೊಚ್ಚಬೇಡಿ I ಹೆಚ್ಚಿದ ಆಸ್ತಿಪಾಸ್ತಿಗೆ ಮನಸ್ಸು ಹಚ್ಚಬೇಡಿ II</verse>
				<verse number="11">ದೇವನೊಮ್ಮೆ ನುಡಿದೀಮಾತು ನನಗಿಮ್ಮಡಿ ಕೇಳಿಸಿತು I ಸರ್ವಾಧಿಕಾರವು ದೇವನಿಗೇ ಸೇರಿದ ಸೊತ್ತು II</verse>
				<verse number="12">ನಿನ್ನ ಪ್ರೀತಿ ಹೇ ಪ್ರಭು, ಅಚಲ ಹಿಮಾಚಲ I ಸರ್ವರಿಗು ನೀಡುವೆ ಕೃತ್ಯಕೆ ತಕ್ಕ ಫಲ II</verse>
			</chapter>
			<chapter number="63">
				<verse number="1">ದೇವಾ, ನೀಯೆನ್ನ ದೇವ, ನಿನಗಾಗಿ ನಾ ಕಾದಿರುವೆ I ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ I ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ II</verse>
				<verse number="2">ನಿನ್ನ ಮಂದಿರದಲಿ ನನಗಾದ ದರ್ಶನದಲಿ I ನಿನ್ನ ಶಕ್ತಿ ಪ್ರತಿಭೆಯನು ಕಂಡಿರುವೆನಲ್ಲಿ II</verse>
				<verse number="3">ಪ್ರಾಣಕ್ಕಿಂತ ಮಿಗಿಲಾದುದು ನಿನ್ನಚಲ ಪ್ರೀತಿ I ಎಡೆಬಿಡದೆ ಮಾಳ್ಪುದು ನನ್ನೀ ತುಟಿ ನಿನ್ನ ಸ್ತುತಿ II</verse>
				<verse number="4">ನಿನ್ನ ಸ್ತುತಿಸುವೆ ಜೀವಮಾನ ಪರಿಯಂತ I ಕೈ ಮುಗಿವೆ ನಿನ್ನ ನಾಮದ ಸ್ಮರಣಾರ್ಥ II</verse>
				<verse number="5">ಮೃಷ್ಟಾನ್ನ ತಿಂದಂತೆ ಎನ್ನ ಮನ ಸಂತೃಪ್ತ I ಸಂಭ್ರಮದಿಂದ ನಿನ್ನ ಹೊಗಳುವುದು ಬಾಯ್ತುಂಬ II</verse>
				<verse number="6">ನಿದ್ರಿಸುವಾಗಲು ಮಾಡುವೆ ನಿನ್ನ ಸ್ಮರಣೆ I ರಾತ್ರಿಯೆಲ್ಲ ನಿನ್ನ ಧ್ಯಾನವೆ ನನಗೆ ಜಾಗರಣೆ II</verse>
				<verse number="7">ನನಗೆ ನೀನು ನಿರಂತರದ ಸಹಾಯಕ I ನಿನ್ನ ರೆಕ್ಕೆಗಳಡಿ ನಾ ಸುಖಿ ಗಾಯಕ II</verse>
				<verse number="8">ನನ್ನಾತ್ಮ ನಿನಗಾತುಕೊಂಡಿದೆ I ನಿನ್ನ ಬಲಗೈ ನನಗಿಂಬಾಗಿದೆ II</verse>
				<verse number="9">ಕೇಡು ಬಗೆಯುವವರು ನನ್ನ ಪ್ರಾಣಕೆ I ಇಳಿದು ಹೋಗುವರು ಅಧೋಲೋಕಕೆ II</verse>
				<verse number="10">ಕತ್ತಿಗವರು ತುತ್ತಾಗುವರು I ನರಿತೋಳಗಳ ಪಾಲಾಗುವರು II</verse>
				<verse number="11">ಹರ್ಷಿಸುವನು ರಾಜಾಧಿರಾಜನು ದೇವನಲಿ I ಸಂತೋಷಿಸುವರು ಆಣೆಯಿಟ್ಟವರು ಆತನಲಿ I ಸದ್ದಿಲ್ಲದಂತಾಗ್ವುದು ಸುಳ್ಳಾಡಿದ ಬಾಯಿ ಅಲ್ಲಿ II</verse>
			</chapter>
			<chapter number="64">
				<verse number="1">ಕಿವಿಗೊಡು ದೇವಾ, ನನ್ನಾತ್ಮದ ಮೊರೆಗೆ I ಕಾಪಾಡು, ಶತ್ರುಗಳ ಭಯವಿದೆ ನನಗೆ II</verse>
				<verse number="2">ತಪ್ಪಿಸೆನ್ನ ಕೆಡುಕರ ಕುತಂತ್ರದಿಂದ I ಕಾದಿರಿಸೆನ್ನ ದುರುಳರ ದೊಂಬಿಯಿಂದ II</verse>
				<verse number="3">ನಾಲಗೆಯೆಂಬ ಅಲಗನವರು ಮಸೆದಿಹರು I ನಂಜುಮಾತೆಂಬ ಅಂಬನು ಹೂಡಿಹರು II</verse>
				<verse number="4">ಗುಟ್ಟಾದೆಡೆಯಿಂದ ಗುರಿಯಿಟ್ಟಿಹರು ನಿರಪರಾಧಿಗಳನೆ I ಅಂಜದೇ ಅಳುಕದೆ ಎಸೆವರು ಬಾಣಗಳನು ತಟ್ಟನೆ II</verse>
				<verse number="5">ಕೆಟ್ಟದನು ಮಾಡಲು ಮನದಟ್ಟುಮಾಡಿಕೊಂಡಿಹರು I “ಗುಟ್ಟಾಗಿಡೋಣ ಉರುಲು, ಕಾಂಬರಾರು?” ಎನ್ನುತಿಹರು? II</verse>
				<verse number="6">ಅವರು ಹೂಡಿರುವುದು ಕುತಂತ್ರವನು I ಕೊಚ್ಚಿಕೊಳ್ವುದು ಚತುರೋಪಾಯವನು I ಅಶೋಧ್ಯ ಮಾನವನ ಹೃನ್ಮನಗಳು! II</verse>
				<verse number="7">ಆದರೆ ಎಸೆವನು ಬಾಣವನು ದೇವನೆ I ಪಡೆವರು ಅಪಘಾತವನು ಫಕ್ಕನೆ II</verse>
				<verse number="8">ನಾಲಿಗೆ ನಿಮಿತ್ತ ಅವರು ಅವನತಿಗೀಡಾಗುವರು I ನೋಡುವವರೆಲ್ಲರು ತಲೆಯಾಡಿಸಿ ಅಣಕಿಸುವರು II</verse>
				<verse number="9">ಜನರೆಲ್ಲರಾಗ ತಲ್ಲಣಗೊಳ್ಳುವರು I ದೇವಕಾರ್ಯವಿದು ಎಂದು ಧ್ಯಾನಿಪರು I ಆತನ ಸತ್ಕಾರ್ಯಗಳನು ಸಾರುವರು II</verse>
				<verse number="10">ಹರ್ಷಿಸಲಿ ಸಜ್ಜನರು ಪ್ರಭುವಿನಲಿ I ಆಶ್ರಯ ಪಡೆಯಲೀಗಲೆ ಆತನಲಿ I ನೇರ ಹೃದಯಿಗಳೆಲ್ಲರು ಹಿಗ್ಗಲಿ II</verse>
			</chapter>
			<chapter number="65">
				<verse number="1">ಸಿಯೋನಿನಲ್ಲಿ ಸಲ್ಲತಕ್ಕವು ನಿನಗೆ ಸ್ತುತಿಸ್ತೋತ್ರಗಳು I ಪೂರೈಸತಕ್ಕವು ದೇವಾ, ಜನರು ನಿನಗೆ ಹೊತ್ತ ಹರಕೆಗಳು II</verse>
				<verse number="2">ದೇವಾ, ನೀ ನಮ್ಮೆಲ್ಲರ ಪ್ರಾರ್ಥನೆಗೆ ಕಿವಿಗೊಡುವಾತ I ನರರೆಲ್ಲರು ಬರುವರು ನಿನ್ನ ಬಳಿಗೆ ಪಾಪದ ಪ್ರಯುಕ್ತ II</verse>
				<verse number="3">ಪಾಪದ ಹೊರೆ ಹೊತ್ತವರು ನಾವಯ್ಯಾ I ಅವುಗಳ ಪರಿಹಾರಕನು ನೀನಯ್ಯಾ II</verse>
				<verse number="4">ನಿನ್ನ ಆಸ್ಥಾನದಲಿ ನೆಲೆಸಲು ನೀನಾಯ್ದು ತಂದ ದೈವಭಕ್ತ ಧನ್ಯ I ನಮಗೆ ತರಲಿ ತೃಪ್ತಿ ನೀ ವಾಸಿಸುವ ಪವಿತ್ರಾಲಯದ ಸೌಭಾಗ್ಯ II</verse>
				<verse number="5">ದೇವಾ, ನೀನೆ ನಮ್ಮೆಲ್ಲರ ಜೀವೋದ್ಧಾರ I ದೂರದ ಸಾಗರ ಸೀಮೆಗಳಿಗೂ ಆಶಾಧಾರ I ಗಂಭೀರ ಕಾರ್ಯವೆಸಗಿ ನೀಡುವೆ ವಿಜಯದುತ್ತರ II</verse>
				<verse number="6">ಬಿಗಿದುಕೊಂಡಿರುವೆ ಶಕ್ತಿಶೌರ್ಯದ ನಡುಗಟ್ಟನು I ಬಿಗಿಯಾಗಿ ನಿಲ್ಲಿಸಿರುವೆ ನೀ ಗುಡ್ಡಬೆಟ್ಟಗಳನು II</verse>
				<verse number="7">ಭೋರ್ಗರೆವ ಸಮುದ್ರಗಳನು, ಗರ್ಜಿಸುವ ತರಂಗಗಳನು I ದೊಂಬಿಯೇಳುವ ಜನಾಂಗಗಳನು ಶಮನಗೊಳಿಸುವವನು ನೀನು II</verse>
				<verse number="8">ಅಚ್ಚರಿಗೊಳ್ಳುವುವು ನಿನ್ನ ಮಹತ್ಕಾರ್ಯಗಳ ಕಂಡು ಎಲ್ಲೆ ಎಲ್ಲೆಗಳು I ಹರ್ಷಾನಂದಗೊಳ್ಳುವರು ಅದಕಂಡಾ ಪೂರ್ವಪಶ್ಚಿಮ ಪ್ರವಾಸಿಗಳು II</verse>
				<verse number="9">ಇಳೆಯನು ಸಂಧಿಸಿ, ಮಳೆಯನು ಸುರಿಸಿ, ನೆಲವನು ನೀ ಸಿರಿಗೊಳಿಸುವಾತ I ನಾಲೆ ತುಂಬ ನೀರಹರಿಸಿ, ಹೊಲ ತುಂಬ ನೀ ಧಾನ್ಯನೀಡುವಾತ II</verse>
				<verse number="10">ನೇಗಿಲ ಗೆರೆಯನು ತೋಯಿಸಿ ಮಣ್ಣಿನ ಹೆಂಟೆಯನು ಕರಗಿಸುತಿ I ಪೊಡವಿಯ ಹೊಲವ ಮಾಚಿಸಿ, ಹುಲುಸಾಗಿ ಪೈರನು ಬೆಳೆಸುತಿ II</verse>
				<verse number="11">ಋತು ಶಿಶಿರಕೆ ಸುಗ್ಗಿಯ ಸೊಬಗಿನ ಮುಕುಟವ ಮುಡಿಸಿದ್ದೀ I ನೀ ನಡೆವ ಹಾದಿಯಲ್ಲೆಲ್ಲಾ ತುಳುಕುತಿದೆ ಸಮೃದ್ಧಿ II</verse>
				<verse number="12">ಮೇವುಗಾಡುಗಳು ಕಂಗೊಳಿಸುತಿವೆ ಪಚ್ಚೆಪಸಿರಿನಿಂದ I ಗುಡ್ಡಗಾಡುಗಳು ಶೋಭಿಸುತಿವೆ ಹರ್ಷಾಡಂಬರದಿಂದ II</verse>
				<verse number="13">ಹುಲ್ಲುಗಾವಲುಗಳು ತುಂಬಿತುಳುಕುತಿವೆ ಕುರಿಹಿಂಡುಗಳಿಂದ I ಕಣಿವೆ ಕಂದರಗಳಿದೊ ಕಂಗೊಳಿಸುತ್ತಿವೆ ತೆನೆಕಾಳುಗಳಿಂದ I ಇಳೆ ಮೊಳಗುತಿದೆ ಆನಂದಘೋಷ, ಸಂತಸ ಗೀತೆಗಳಿಂದ II</verse>
			</chapter>
			<chapter number="66">
				<verse number="1">ಜಗವೆಲ್ಲ ಮಾಡಲಿ ಜಯಕಾರ ದೇವನಿಗೆ I</verse>
				<verse number="2">ಹಾಡಲಿ ಆತನ ಶ್ರೀನಾಮ ಮಹಿಮೆಗೆ II</verse>
				<verse number="3">“ನಿನ್ನ ಕಾರ್ಯಗಳೆನಿತೋ ಚೇತೋಹಾರಿ I ನಿನ್ನ ಪರಾಕ್ರಮಕೆ ಶತ್ರುಗಳು ಪರಾರಿ II</verse>
				<verse number="4">ಜಗವೆಲ್ಲ ಪೂಜಿಪುದು ನಿನ್ನನು I ಪೊಗಳಿ ಮಾಳ್ಪುದು ಗುಣಗಾನವನು I ಕೀರ್ತಿಸುವುದು ನಿನ್ನ ನಾಮವನು” II</verse>
				<verse number="5">ಬನ್ನಿ, ದೇವನತಿಶಯ ಕಾರ್ಯಗಳ ನೋಡಬನ್ನಿ I ಜನತೆಗಾತ ಮಾಡಿದುದು ಅತ್ಯಾಶ್ಚರ್ಯವೆನ್ನಿ II</verse>
				<verse number="6">ಒಣನೆಲವಾಗಿ ಮಾರ್ಪಡಿಸಿದ ಕಡಲನು I ಕಾಲು ನಡೆಯಲೇ ದಾಟಿಸಿದ ನದಿಯನು I ಇದ ನಿಮಿತ್ತ ಪಡೆಯೋಣ ಆನಂದವನು II</verse>
				<verse number="7">ಆತನಾಳ್ವಿಕೆ ಶಕ್ತಿಯುತ, ನಿರಂತರ I ರಾಷ್ಟ್ರಗಳ ಮೇಲೆ ಅವನ ನೇತ್ರ ಕನಿಕರ I ಜಂಬ ಕೊಚ್ಚದಿರಲಿ ದಂಗೆಕೋರ II</verse>
				<verse number="8">ಜನಾಂಗಗಳೇ, ನಮಿಸಿರಿ ನಮ್ಮ ದೇವನನು I ಗಟ್ಟಿಯಾಗಿ ಮಾಡಿರಿ ಅವನ ಗುಣಗಾನವನು II</verse>
				<verse number="9">ನಮ್ಮ ಪ್ರಾಣವನ್ನಾತ ಉಳಿಸಿದನಯ್ಯಾ I ಕಾಲೆಡವದಂತೆ ಕಾಪಾಡಿದನಯ್ಯಾ II</verse>
				<verse number="10">ಹೇ ದೇವಾ, ನೀ ನಮ್ಮನ್ನು ಪರಿಶೋಧಿಸಿದೆ I ಪುಟಕ್ಕಿಟ್ಟ ಚಿನ್ನದಂತೆ ಶುದ್ಧೀಕರಿಸಿದೆ II</verse>
				<verse number="11">ಉರುಲು ಬಲೆಗೆ ನಮ್ಮನು ಸಿಕ್ಕಿಸಿದೆ I ಭಾರಿ ಹೊರೆಯನು ಬೆನ್ನಿಗೆ ಹೊರಿಸಿದೆ II</verse>
				<verse number="12">ಶತ್ರುಗಳೆಮ್ಮ ತಲೆಮೇಲೆ ರಥವನೋಡಗೊಳಿಸಿದೆ I ಅಗ್ನಿಯನೂ ಜಲವನೂ ದಾಟುವಂತೆ ಮಾಡಿದೆ I ಕೊನೆಗೆ ಸಮೃದ್ಧ ನಾಡಿಗೆಮ್ಮನು ಸೇರಿಸಿದೆ II</verse>
				<verse number="13">ದಹನ ಬಲಿಯನರ್ಪಿಸೆ ದೇಗುಲಕೆ ಧಾವಿಸುವೆ I ನಿನಗೆ ನಾ ಹೊತ್ತ ಹರಕೆಗಳನ್ನು ತೀರಿಸುವೆ II</verse>
				<verse number="14">ಪೂರೈಸುವೆನು ಬಾಯಾರೆ ಮಾಡಿದ ಹರಕೆಯನು I ಸಂಕಟಕಾಲದಲಿ ನಾ ಮಾಡಿದ ವ್ರತವನು II</verse>
				<verse number="15">ಕೊಬ್ಬಿದ ಪ್ರಾಣಿಗಳನರ್ಪಿಸುವೆನು ಯಜ್ಞವಾಗಿ I ಹೋತಹೋರಿಗಳ ಕೊಡುವೆನು ನಿನಗೆ ಕಾಣಿಕೆಯಾಗಿ I ಟಗರುಗಳ ಬಲಿಧೂಪವೆತ್ತುವೆನು ಆರತಿಯಾಗಿ II</verse>
				<verse number="16">ಬಂದು ಕೇಳಿರಿ ದೇವನಲಿ ಭಯಭಕ್ತಿಯುಳ್ಳವರೆ I ದೇವನೆನಗೆ ಮಾಡಿದ ಕಾರ್ಯಗಳ ತಿಳಿಸುವೆ ನಿಮಗೆ II</verse>
				<verse number="17">ದೇವನಿಗೆನ್ನ ಮನ ಸ್ವರವೆತ್ತಿ ಮೊರೆಯಿಟ್ಟಿತು I ಆತನ ಸ್ತುತಿ ನನ್ನ ಬಾಯಲಿ ತುಳುಕುತ್ತಿತ್ತು II</verse>
				<verse number="18">ಕೆಟ್ಟತನವನು ನಾ ಮನದಲ್ಲಿಟ್ಟಿದ್ದರೆ I ಮುಟ್ಟುವಂತಿರಲಿಲ್ಲ ಆತನಿಗೆ ಎನ್ನ ಮೊರೆ II</verse>
				<verse number="19">ಆದರೆನ್ನ ಮೊರೆಯು ದೇವನನು ಮುಟ್ಟಿರುವುದು ನಿಜ I ಎನ್ನ ಪ್ರಾರ್ಥನೆಗಾತ ಕಿವಿಗೊಟ್ಟಿರುವುದು ಸಹಜ II</verse>
				<verse number="20">ಎನ್ನ ಪ್ರಾರ್ಥನೆಯನು ತಿರಸ್ಕರಿಸದ ದೇವನಿಗೆ ಸ್ತುತಿ I ತನ್ನ ಪ್ರೀತಿಯನೆನಗೆ ನಿರಾಕರಿಸದಾತನಿಗೆ ಸನ್ನುತಿ II</verse>
			</chapter>
			<chapter number="67">
				<verse number="1">ಹರಸು ದೇವಾ, ನಮ್ಮನಾಶೀರ್ವದಿಸು I ನಿನ್ನ ಮುಖಕಾಂತಿಯಿಂದೆಮ್ಮನು ಬೆಳಗಿಸು II</verse>
				<verse number="2">ಪ್ರಸಿದ್ಧವಾಗಲಿ ನಿನ್ನ ಸನ್ಮಾರ್ಗ ಜಗದೊಳೆಲ್ಲಾ I ಜೀವೋದ್ಧಾರಗೊಳಿಸುವ ನಿನ್ನ ಶಕ್ತಿ ಜನತಿಗೆಲ್ಲ II</verse>
				<verse number="3">ನಿನ್ನ ಕೀರ್ತಿಸಲಿ ದೇವಾ, ಜನರು I ಸಂಕೀರ್ತಿಸಲಿ ಅವರೆಲ್ಲರೂ II</verse>
				<verse number="4">ನ್ಯಾಯದ ಪ್ರಕಾರ ತೀರ್ಪಿಡುತಿ ಜನತೆಗೆ I ಆದರ್ಶನೀಡುತಿ ಜಗದ ರಾಷ್ಟ್ರಗಳಿಗೆ I ಹರ್ಷಾನಂದವಾಗಲಿ ಜನಾಂಗಗಳಿಗೆ II</verse>
				<verse number="5">ನಿನ್ನ ಕೀರ್ತಿಸಲಿ ದೇವಾ, ಜನರು I ಸಂಕೀರ್ತಿಸಲಿ ಅವರೆಲ್ಲರೂ II</verse>
				<verse number="6">ಇತ್ತನೆಮ್ಮ ದೇವನು ಆಶೀರ್ವಾದವನು I ಕೊಟ್ಟಿತೆಮ್ಮ ಭೂಮಿಯು ಸಂತುಷ್ಟ ಬೆಳೆಯನು II</verse>
				<verse number="7">ನಮ್ಮೆಲ್ಲರನು ದೇವನು ಹರಸಲಿ I ಎಲ್ಲೆಡೆ ಆತನ ಭಯಭಕ್ತಿಯಿರಲಿ II</verse>
			</chapter>
			<chapter number="68">
				<verse number="1">ಎಚ್ಚರಗೊಳ್ಳಲಿ, ದೇವನೆಚ್ಚರಗೊಳ್ಳಲಿ I ಆತನ ಶತ್ರುಗಳೆಲ್ಲರು ಚದರಿಹೋಗಲಿ I ಆತನ ವಿರೋಧಿಗಳು ಪಲಾಯನ ಗೈಯಲಿ II</verse>
				<verse number="2">ಅವರನು ಊದಿಬಿಡು ದೇವಾ, ತೇಲಿಹೋಗಲಿ ಹೊಗೆಯಂತೆ I ಕರಗಿಹೋಗಲಿ ನಿನ್ನೆದುರಿಗೆ ಅಗ್ನಿಮುಟ್ಟಿದ ಮೇಣದಂತೆ II</verse>
				<verse number="3">ಸಜ್ಜನರಾದರೊ ಸಂತೋಷಿಸಲಿ I ದೇವರ ಮುಂದೆ ಆನಂದಿಸಲಿ I ಅತುಳ ಹರ್ಷಾನಂದಗೊಳ್ಳಲಿ II</verse>
				<verse number="4">ಗಾಯನ ಮಾಡಿರಿ ದೇವನಿಗೆ, ಕೊಂಡಾಡಿರಿ ಆತನ ನಾಮವನು I ಮೇಘಾರೂಢನಾಗಿ ಬರುವವಗೆ ಸಿದ್ಧಮಾಡಿರಿ ರಾಜಮಾರ್ಗವನು I “ಪ್ರಭು” ಆತನ ನಾಮಧೇಯ, ಹರ್ಷದಿ ಸೇರಿರಿ ಆತನ ಸನ್ನಿಧಿಯನು II</verse>
				<verse number="5">ದಿವ್ಯಧಾಮದಲ್ಲಿಹ ಆ ದೇವ I ತಬ್ಬಲಿಗೆ ತಂದೆ, ವಿಧವೆಗಾಶ್ರಯ II</verse>
				<verse number="6">ನೀಡುವನು ಮಡದಿ ಮಕ್ಕಳನು ಒಂಟಿಗನಿಗೆ I ಬಿಡುಗಡೆಯ ಭಾಗ್ಯವನು ನೊಂದ ಬಂಧಿಗಳಿಗೆ I ದ್ರೋಹಿಗಳಿಗಾದರೋ ಮರಳುಗಾಡೇ ಮಾಳಿಗೆ II</verse>
				<verse number="7">ದೇವಾ, ಪ್ರಜೆಗೆ ಮುಂದಾಳಾಗಿ ನೀ ಹೊರಟಾಗ I ಅರಣ್ಯ ಮಾರ್ಗವಾಗಿ ನೀ ಪ್ರಯಾಣಮಾಡಿದಾಗ II</verse>
				<verse number="8">ನಡುಗಿತು ಪೊಡವಿ, ಕಂಪಿಸಿತು ಸೀನಾಯಿ, ದೇವ ಪ್ರತ್ಯಕ್ಷನಾದನೆಂದು I ಮಳೆಗರೆಯಿತು ಮೋಡಗಿರಿ, ಇಸ್ರಯೇಲ್ ದೇವ ಪ್ರತ್ಯಕ್ಷನಾದನೆಂದು II</verse>
				<verse number="9">ದೇವಾ, ಹೇರಳವಾಗಿ ನೀ ಸುರಿಮಳೆಗರೆದೆ I ಬತ್ತಿದ ನಿನ್ನ ಸೊತ್ತನ್ನು ಸಮೃದ್ಧಿಗೊಳಿಸಿದೆ II</verse>
				<verse number="10">ವಸತಿಯಾಯಿತದು ನಿನ್ನ ಜನಮಂದೆಗೆ I ಆಸ್ಥೆಯಿಂದೊದಗಿಸಿದೆ ದೀನ ದಲಿತರಿಗೆ II</verse>
				<verse number="11">ಹೊರಡಿಸಿದನು ಪ್ರಭು ಶುಭವಾರ್ತೆಯೊಂದನು I ಹರಡಿತು ಜನಸ್ತೋಮ ಆ ಸಂದೇಶವನು II</verse>
				<verse number="12">ಓಡಿದರು, ದಂಡೊಡನೆ ಓಡಿದರು ದೊರೆಗಳು I ದೋಚಿಕೊಂಡರು ಕೊಳ್ಳೆಯನು ಗೃಹಿಣಿಯರು II</verse>
				<verse number="13">ಪಾರಿವಾಳ ರೆಕ್ಕೆಗಳಂಥ ಕನಕದಾಕೃತಿಗಳಿದೋ I ಗರಿಗಳಂತೆ ಥಳಥಳಿಸುವ ಬಂಗಾರ ರೇಖೆಗಳಿದೋ I ನೀವಾದರೋ ಕುರಿದೊಡ್ಡಿಗಳಲ್ಲಿ ಬೆಚ್ಚನಿದ್ದಿರೋ? II</verse>
				<verse number="14">ಸರ್ವಶಕ್ತನು ಅರಸರನತ್ತ ಸದೆಬಡಿದಂತೆ I ಇತ್ತ ಬೀಳುತ್ತಿತ್ತು ಸಾಲ್ಮೋನ್ ಗಿರಿಮೇಲೆ ಹಿಮಗಡ್ಡೆ II</verse>
				<verse number="15">ಬಾಷಾನಿನ ಪರ್ವತವೇ, ನೀ ಮಹೋನ್ನತ I ಹಲವು ಶಿಖರಗಳಿಗಿಂತ ನೀ ಅಲಂಕೃತ II</verse>
				<verse number="16">ಆದರೂ ದೇವನಾರಿಸಿದ ಗಿರಿಯನು I ಆತ ಬಯಸಿದ ಆ ಚಿರ ನಿವಾಸವನು I ನೀ ಓರೆಗಣ್ಣಿಂದ ಕಾಣುವೆಯೇನು? I ಎಲೈ ಶಿಖರೋನ್ನತ ಪರ್ವತವೇ, ಪೇಳು II</verse>
				<verse number="17">ತನ್ನ ಸಹಸ್ರಾರು, ಲಕ್ಷಾಂತರ ರಥಗಳ ಸಮೇತ I ಸೀನಾಯಿಂದ ದೇಗುಲಕೆ ಪ್ರಭುವಿನ ಸಮಾಗಮನ II</verse>
				<verse number="18">ಹೇ ದೇವಾ, ಹೇ ಪ್ರಭು, ನೀನೇರಿದೆ ಉನ್ನತ ಶಿಖರಕೆ I ಕರೆದೊಯ್ದೆ ಖೈದಿಗಳನೇಕರನು ನಿನ್ನ ನಿವಾಸಕೆ I ಸರಳರಿಂದಲೂ ದುರುಳರಿಂದಲೂ ಪಡೆದೆ ಕಪ್ಪಕಾಣಿಕೆ I ದೇವರಾದ ಪ್ರಭುವೇ, ಅಲ್ಲೇ ನೀ ವಾಸಿಸುವೆ II</verse>
				<verse number="19">ಸ್ತುತಿಯಾಗಲಿ ನಮ್ಮನುದ್ಧರಿಸುವಾ ದೇವನಿಗೆ I ನಮ್ಮನನುದಿನ ಬಿಡದೆ ಸಹಿಸಿಕೊಳ್ಳುವಾ ಪ್ರಭುವಿಗೆ II</verse>
				<verse number="20">ನಮ್ಮ ದೇವರು ಜೀವೋದ್ಧಾರಕ ದೇವರು ಹೌದು I ಸಾವಿಂದ ತಪ್ಪಿಸುವ ಶಕ್ತಿ, ಸ್ವಾಮಿ ದೇವರದು II</verse>
				<verse number="21">ಸಂಹರಿಸುವನಾತನು ಶತ್ರುಗಳಾ ಶಿರಸ್ಸನು I ನಸುಕುವನು ದುರ್ಮಾರ್ಗಿಗಳ ಕೇಶ ಕಿರೀಟವನು II</verse>
				<verse number="22">ಪ್ರಭುವಿನ ನುಡಿ: “ನಿನ್ನ ಶತ್ರುಗಳ ನೆತ್ತರಲಿ ನೀ ಕಾಲ್ತೊಳೆವಂತೆ I ನಿನ್ನ ನಾಯಿಗಳಿಗದನೆಕ್ಕಲು ಸಾಕಷ್ಟು ಸಿಗುವಂತೆ I ಬಾಷಾನಿನಿಂದವರನು ನಾ ಮರಳಿ ಬರಮಾಡುವೆ I ಸಮುದ್ರ ತಳದಿಂದವರನು ನಾ ಮತ್ತೆ ಮೇಲೆತ್ತುವೆ” II</verse>
				<verse number="23"></verse>
				<verse number="24">ಕಂಗೊಳಿಸುತಿದೆ ದೇವ, ನಿನ್ನ ಭವ್ಯ ಮೆರವಣಿಗೆ I ನನ್ನರಸ ದೇವನು ನಡೆವ ತನ್ನಾ ಗರ್ಭಗುಡಿಗೆ II</verse>
				<verse number="25">ಮುಂಗಡೆಯಲಿದೋ ಹಾಡುಗಾರರು I ಹಿಂಗಡೆಯಲಿದೋ ವಾದ್ಯಗಾರರು I ನಡುವೆ ದಮ್ಮಡಿ ಬಡಿವ ಮಹಿಳೆಯರು II</verse>
				<verse number="26">“ಇಸ್ರಯೇಲಿನ ವಂಶಜರೇ, ಸ್ತುತಿಸಿರಿ ಪ್ರಭುವನು” ಎನ್ನುತಿಹರು I “ಸಭೆ ಸಮ್ಮುಖದಲಿ ಕೊಂಡಾಡಿರಿ ದೇವರನು” ಎಂದು ಹಾಡುತಿಹರು I</verse>
				<verse number="27">ಮುನ್ನಡೆಯುತ್ತಿಹರಿದೋ ಕಿರಿಯ ಕುಲದ ಬೆನ್ಯಮೀನರು I ಗುಂಪಾಗಿ ಬರುತಿಹರು ಯೆಹೂದ್ಯ ಕುಲದ ಗುರುಹಿರಿಯರು I ಹಿಂಬಾಲಿಸುತಿಹರು ಜೆಬುಲೋನ್, ನಫ್ತಾಲಿ ಗೋತ್ರದವರು II</verse>
				<verse number="28">ನಿನ್ನ ಶಕ್ತಿಸಾಮರ್ಥ್ಯವನು ಹೇ ದೇವಾ, ಪ್ರದರ್ಶಿಸು I ನಮ್ಮ ಪರ ಪ್ರಯೋಗಿಸಿದ ಬಲವನು ಮರಳಿ ತೋರ್ಪಡಿಸು II</verse>
				<verse number="29">ಜೆರುಸಲೇಮಿನ ನಿನ್ನ ಮಹಾದೇವಾಲಯದ ಪ್ರಯುಕ್ತ I ಅರಸರು ನಿನಗೆ ಕಾಣಿಕೆಯನು ತಂದೊಪ್ಪಿಸುವುದು ಅತಿಸೂಕ್ತ II</verse>
				<verse number="30">ದಂಡಿಸು ಜಂಡು ಕಾಡುಮೃಗದಂಥಾ ನಾಡನು I ಗದರಿಸು ಹೋರಿ ದನಕುರಿಗಳಂಥಾ ನಾಡುಗಳನು II ಚದರಿಸು ಕಲಹಕಾಳಗ ಪ್ರಿಯ ಜನಾಂಗಗಳನು I ಅಡ್ಡಬೀಳಿಸು ನಿನಗೆ ಬೆಳ್ಳಿಗಟ್ಟಿ ತಂದವರನು II</verse>
				<verse number="31">ರಾಯಭಾರಿಗಳಾಗಿ ಬರುವರು ಈಜಿಪ್ಟಿನ ಜನರು I ದೇವರಿಗೆ ಕೈ ಮುಗಿವರು ಇಥಿಯೋಪಿಯದವರು II</verse>
				<verse number="32">ಭೂರಾಜ್ಯಗಳೇ, ಸ್ತುತಿಸಿರಿ ದೇವರನು I ಸಂಕೀರ್ತಿಸಿರಿ ನೀವೆಲ್ಲರು ಪ್ರಭುವನು II</verse>
				<verse number="33">ಆದಿಮೊದಲು ಮೇಘಾರೂಢನಾಗಿರುವನು I ಕೊಂಡಾಡಿರಿ, ಗುಡುಗಿನಂತೆ ಗರ್ಜಿಸುವಾತನನು II</verse>
				<verse number="34">ಸಾರಿರಿ ದೇವರಾ ಶಕ್ತಿಸಾಮರ್ಥ್ಯವನು I ಇಸ್ರಯೇಲಿಗೆ ತೋರಿದಾ ಪ್ರಭಾವವನು I ಗಗನವನು ಆವರಿಸಿರುವಾ ಪ್ರತಿಭೆಯನು II</verse>
				<verse number="35">ಪರಮ ಪವಿತ್ರಾಲಯದಲ್ಲಿಹ ದೇವಭಯಭಕುತಿಗೆ ಪಾತ್ರ I ಪ್ರಜೆಗೆ ಪರಾಕ್ರಮವೀವ ಇಸ್ರಯೇಲ ದೇವನಿಗೆ ಸ್ತೋತ್ರ II</verse>
			</chapter>
			<chapter number="69">
				<verse number="1">ಒಡನೆ ಕೈ ನೀಡಿ ಕಾಪಾಡು ದೇವಾ I ಕುತ್ತಿಗೆಗೆ ಬಂದಿದೆ ತುಂಬು ಪ್ರವಾಹ II</verse>
				<verse number="2">ಮುಳುಗುತಿಹೆನು ಕಳ್ಳುಸುಬಿನಲಿ; ಕಾಲೂರಲೆನಗೆ ನೆಲವಿಲ್ಲ I ಸಿಕ್ಕಿಹೆನು ಆಳ ಮಡುವಿನಲ್ಲಿ, ಹುಚ್ಚುಹೊಳೆ ಕೊಚ್ಚುತ್ತಿದೆಯಲ್ಲಾ II</verse>
				<verse number="3">ಕಾಯ್ದು ಕಾಯ್ದು ಕಣ್ಣು ಗುಳಿಬಿದ್ದಿದೆ ದೇವಾ, ನಿನಗಾಗಿ I ಗಂಟಲು ಒಣಗಿದೆ, ಜೀವ ಸೊರಗಿದೆ, ನಿನ್ನ ಕೂಗಿ ಕೂಗಿ II</verse>
				<verse number="4">ತಲೆ ಕೂದಲಿಗಿಂತ ಮಿಗಿಲಿಹರು ನಿಷ್ಕಾರಣ ದ್ವೇಷಿಗಳು I ಬಲಿಷ್ಟರಿಹರು ನನ್ನ ಕೊಲೆಗಡುಕರು, ನಿರ್ನಿಮಿತ್ತ ಶತ್ರುಗಳು I ಕಳ್ಳನಾನಲ್ಲನಾದರೂ ದಂಡಕೋರುತಿಹರು ವೈರಿಗಳು II</verse>
				<verse number="5">ನನ್ನ ಮೂರ್ಖತನವನು ದೇವಾ, ನೀ ಬಲ್ಲೆಯಯ್ಯಾ I ನನ್ನಪರಾಧಗಳು ನಿನಗೆ ಮರೆಯಾಗಿಲ್ಲವಯ್ಯಾ II</verse>
				<verse number="6">ಪ್ರಭು ಸೇನಾಧೀಶ್ವರಾ, I ನನ್ನಿಂದ ನಿರಾಶೆಯಾಗದಿರಲಿ, ನಿನ್ನ ನಂಬಿದವರಿಗೆ II ಇಸ್ರಯೇಲರ ದೇವಾ I ನನ್ನಿಂದ ನಿಂದೆಯಾಗದಿರಲಿ ನಿನ್ನ ದರ್ಶನಾರ್ಥಿಗಳಿಗೆ II</verse>
				<verse number="7">ನಿನಗಾಗಿಯೇ ನಾ ನಿಂದೆಗೊಳಗಾದೆನಯ್ಯಾ I ನಾಚಿಕೆಯಿಂದಲೆ ಮುಖ ಮುಚ್ಚಿಕೊಂಡೆನಯ್ಯಾ II</verse>
				<verse number="8">ನನ್ನವರಿಗೇ ನಾನನ್ಯನಾದೆನಯ್ಯಾ I ಒಡ ಹುಟ್ಟಿದವರಿಗೇ ಹೊರಗಿನವನಾದೆನಯ್ಯಾ II</verse>
				<verse number="9">ಅಗ್ನಿಯಂತೆನ್ನ ದಹಿಸುತ್ತಿದೆ ನಿನ್ನಾಲಯದಭಿಮಾನ I ಎನ್ನ ಮೇಲೆರಗಿದೆ ನಿನ್ನ ಕಡುದ್ರೋಹಿಗಳ ದೂಷಣ II</verse>
				<verse number="10">ಅತ್ತತ್ತು ನಾ ಒಪ್ಪೊತ್ತಿದ್ದುದೆಲ್ಲಾ I ಚುಚ್ಚುಮಾತಿಗೆ ಕಾರಣವಾಯಿತಲ್ಲಾ II</verse>
				<verse number="11">ಗೋಣಿತಟ್ಟನು ನಾನುಟ್ಟುಕೊಂಡೆನಯ್ಯಾ I ಅಣಕ ಅವಹೇಳನಕೆ ಗುರಿಯಾದೆನಯ್ಯಾ II</verse>
				<verse number="12">ಊರ ಬಾಗಿಲಲಿ ಕೂರುವವರ ಹರಟೆಗೆ ಕಾರಣನಾದೆನಯ್ಯಾ I ಸಾರಾಯಿ ಮದ್ಯಸಾರ ಕುಡಿವವರ ಪದ್ಯವಸ್ತುವಾದೆನಯ್ಯಾ II</verse>
				<verse number="13">ಪ್ರಸನ್ನಕಾಲದಲ್ಲಿ ಪ್ರಭು, ನಾ ಮೊರೆಯಿಡುತ್ತಿರುವೆ ನಿನಗೆ I ಪ್ರೀತಿಮಯ ದೇವಾ, ಜೀವೋದ್ಧಾರಕ, ಸದುತ್ತರ ನೀಡೆನಗೆ II</verse>
				<verse number="14">ಕಳ್ಳುಸುಬಿನಲಿ ನಾನಿಳಿದು ಹೋಗದಂತೆ ಸೆಳೆದುಕೊ I ಪೊಳ್ಳು ದುರುಳರ ಮಡುವಿನಲಿ ನಾ ಮುಳುಗದಂತೆ ಎಳೆದುಕೊ II</verse>
				<verse number="15">ಹುಚ್ಚು ಹೊಳೆಯು ಎನ್ನ ಕೊಚ್ಚದಿರಲಯ್ಯಾ I ಮಡುವು ಎನ್ನ ಸೆಳೆದುಕೊಳ್ಳದಿರಲಯ್ಯಾ I ಪಾತಾಳವೆನ್ನನು ನುಂಗದಿರಲಯ್ಯಾ II</verse>
				<verse number="16">ಆಲಿಸೆನ್ನ ಪ್ರಭು, ನಿನ್ನ ಪ್ರೀತಿ ಸುಮಧುರ I ಕಟಾಕ್ಷಿಸೆನ್ನನು ದೇವಾ, ಕರುಣಾಸಾಗರ II</verse>
				<verse number="17">ನಿನ್ನ ದಾಸನಿಗೆ ವಿಮುಖನಾಗಬೇಡಯ್ಯಾ I ಆಪತ್ತಿನಲ್ಲಿರುವೆ, ತಡಮಾಡಬೇಡಯ್ಯಾ II</verse>
				<verse number="18">ಹತ್ತಿರ ಬಂದೆನ್ನ ಉದ್ಧರಿಸಯ್ಯಾ I ಶತ್ರುಗಳ ಕೈಯಿಂದ ರಕ್ಷಿಸಯ್ಯಾ II</verse>
				<verse number="19">ನನಗಾದ ನಿಂದೆ, ಅಪಮಾನ, ಲಜ್ಜೆ ನಿನಗೆ ತಿಳಿದಿದೆಯಯ್ಯಾ I ನನ್ನ ವೈರಿ ವಿರೋಧಿಗಳು ನಿನಗೆ ಮರೆಯಾಗಿಲ್ಲವಯ್ಯಾ II</verse>
				<verse number="20">ನಿಂದೆಯಿಂದ ಮನನೊಂದು ಹತಾಶನಾಗಿರುವೆನಯ್ಯಾ I ಹಾತೊರೆದರೂ ದಯೆತೋರುವನಾರೂ ಸಿಗಲಿಲ್ಲ I ಅರಸಿದರೂ ಸಾಂತ್ವನನೀಡುವವನು ದೊರಕಲಿಲ್ಲ II</verse>
				<verse number="21">ಹಸಿದ ನನಗೆ ವಿಷಬೆರೆತ ಆಹಾರವಿತ್ತರಯ್ಯಾ I ಬಾಯಾರಿದೆನಗೆ ಕಹಿ ಕಾಡಿಯನು ಕೊಟ್ಟರಯ್ಯಾ II</verse>
				<verse number="22">ಅವರಿಗೆ ಬಡಿಸಿದ ಊಟವೇ ಅವರಿಗೆ ಉರುಲಾಗಲಿ I ಅವರ ಹಬ್ಬದೌತಣವೇ ಅವರಿಗೆ ಬೋನಾಗಲಿ II</verse>
				<verse number="23">ಅವರ ಕಣ್ಣು ಮಬ್ಬಾಗಿ ಕಾಣದೆಹೋಗಲಿ I ಅವರ ಸೊಂಟ ಬಿಡುವಿಲ್ಲದೆ ನಡುಗುತ್ತಿರಲಿ II</verse>
				<verse number="24">ನಿನ್ನ ರೌದ್ರ ಅವರ ಮೇಲೆರಗಲಿ I ನಿನ್ನ ಕೋಪಾಗ್ನಿ ಅವರನು ದಹಿಸಲಿ II</verse>
				<verse number="25">ಅವರ ಪಾಳೆಯ ಹಾಳು ಬೀಳಲಿ I ಅವರ ಗುಡಾರ ಬಿಕೋ ಎನಿಸಲಿ II</verse>
				<verse number="26">ನೀ ಗಾಯಪಡಿಸಿದವರನು ಪೀಡಿಸುತಿಹರು I ಗಾಯದ ಮೇಲೆ ಬರೆಯೆಳೆಯುತಿಹರು II</verse>
				<verse number="27">ದಂಡನೆ ಮೇಲೆ ದಂಡನೆಯನು ಅವರಿಗೆ ವಿಧಿಸು I ಅವರು ನಿರಪರಾಧಿಗಳೆಂಬುದನು ತಪ್ಪಿಸು II</verse>
				<verse number="28">ಉಳಿಸಬೇಡವರನು ಜೀವಬಾಧ್ಯರ ಪಟ್ಟಿಯಲಿ I ಸೇರಿಸಬೇಡವರನು ಸಜ್ಜನರ ಸಂಖ್ಯೆಯಲಿ II</verse>
				<verse number="29">ದೇವಾ, ನಾ ನೊಂದುಬೆಂದಿಹೆನಯ್ಯಾ I ಉದ್ಧರಿಸಿ ನನ್ನನು ಕಾಪಾಡಯ್ಯಾ II</verse>
				<verse number="30">ಸಂಕೀರ್ತಿಸುವೆನು ದೇವರ ಶ್ರೀನಾಮವನು I ಕೃತಜ್ಞತೆಯಿಂದಾತನನು ಕೊಂಡಾಡುವೆನು II</verse>
				<verse number="31">ಸ್ವಾಮಿ ದೇವನಿಗಿದುವೇ ಸುಪ್ರೀತಿ I ಕೊಂಬುಗೊರಸುಳ್ಳ ಗೂಳಿಬಲಿಗಿಂತ II</verse>
				<verse number="32">ಇದನರಿತು ದೀನದಲಿತರು ಆನಂದಗೊಳ್ಳಲಿ I ದೇವನನು ಅರಸುವವರು ಪುನಶ್ಚೇತನಗೊಳ್ಳಲಿ II</verse>
				<verse number="33">ಬಡಬಗ್ಗರ ಮೊರೆಗೆ ಪ್ರಭು ಕಿವಿಗೊಡದಿರನು I ಸೆರೆಯಲ್ಲಿಹ ತನ್ನವರನು ತಿರಸ್ಕರಿಸನು II</verse>
				<verse number="34">ಭೂಮ್ಯಾಕಾಶಗಳು ಆತನನು ಕೊಂಡಾಡಲಿ I ಸಾಗರಗಳು, ಜಲಚರಗಳು ಆತನನು ಭಜಿಸಲಿ II</verse>
				<verse number="35">ರಕ್ಷಿಸುವನು ದೇವನು ಆ ಸಿಯೋನ್ ಪಟ್ಟಣವನು I ಕಟ್ಟಿಸುವನು ಯೆಹೂದ ನಾಡಿನ ನಗರಗಳನು I ಸ್ವಂತವಾಗಿರಿಸಿಕೊಂಬರು ಆತನ ಪ್ರಜೆ ಅದನು II</verse>
				<verse number="36">ಅವರ ವಂಶಜರೇ ಬಾಧ್ಯಸ್ಥರಾಗುವರದಕೆ I ದೇವರನಾಮ ಪ್ರಿಯರೇ ನಿವಾಸಿಗಳು ಅದಕೆ II</verse>
			</chapter>
			<chapter number="70">
				<verse number="1">ಕರುಣೆಯಿಂದೆನ್ನನು ದೇವಾ, ರಕ್ಷಿಸು I ತ್ವರೆಯಾಗಿ ಬಂದು ಪ್ರಭು, ಉದ್ಧರಿಸು II</verse>
				<verse number="2">ಪಡಲಿ ಮಾನಭಂಗ ನನ್ನ ಹತ್ಯವನು ಕೋರುವವರು I ನಾಚಿ ಓಡಲಿ ಹಿಂದಕೆ ನನಗಾಪತ್ತನು ಬಯಸುವವರು I</verse>
				<verse number="3">“ಆಹಾಹಾ” ಎಂದೆನ್ನ ಜರೆಯುವವರು I ಬೆಂಗೊಟ್ಟು ಓಡಲಿ ಆ ಲಜ್ಜೆಗೆಟ್ಟವರು II</verse>
				<verse number="4">ನಿನ್ನ ದರ್ಶನಾರ್ಥಿಗಳು ಹರ್ಷಿಸಲಿ, ನಿನ್ನಲಿ ನಲಿದು ಆನಂದಿಸಲಿ I ನಿನ್ನ ಉದ್ಧಾರಕ ಶಕ್ತಿ ಪ್ರಿಯರು ಸತತ “ದೇವನಿಗೆ ಉಘೇ” ಎನ್ನಲಿ II</verse>
				<verse number="5">ದೇವಾ, ನಾ ದಿಕ್ಕಿಲ್ಲದವನು, ಕುಗ್ಗಿದವನು, ನನ್ನ ಬಳಿಗೆ ಬಾ I ನೀನೆನಗೆ ಸಹಾಯಕನು, ರಕ್ಷಕನು ಪ್ರಭು, ತಡಮಾಡದೆ ಬಾ II</verse>
			</chapter>
			<chapter number="71">
				<verse number="1">ಆಶ್ರಯಕೋರಿ ಹೇ ಪ್ರಭು, ನಾ ಬಂದಿರುವೆ I ಆಶಾಭಂಗವಾಗದಿರಲೆಂದು ನಾ ಬೇಡುವೆ II</verse>
				<verse number="2">ಸತ್ಯಸ್ವರೂಪನೆ, ನನ್ನ ಬಿಡಿಸಿ ರಕ್ಷಿಸಯ್ಯಾ I ನನಗೆ ಕಿವಿಗೊಟ್ಟು ಪ್ರಭು ನನ್ನನುದ್ಧರಿಸಯ್ಯಾ II</verse>
				<verse number="3">ನೀನಾಗಿರು ನನಗಾಶ್ರಯದುರ್ಗ, ಕೋಟೆಕೊತ್ತಲು I ನೀನೇ ನನ್ನ ದುರ್ಗ, ಕೋಟೆ ನನ್ನನು ರಕ್ಷಿಸಲು II</verse>
				<verse number="4">ದುರುಳರ ಕೈಯಿಂದೆನ್ನನು ದೇವಾ, ಬಿಡಿಸಯ್ಯಾ I ಕ್ರೂರ ಕೇಡಿಗರ ವಂಶದಿಂದೆನ್ನನು ತಪ್ಪಿಸಯ್ಯಾ II</verse>
				<verse number="5">ಸ್ವಾಮಿ ದೇವಾ, ನೀನೇ ನನ್ನ ಭರವಸೆ I ಬಾಲ್ಯದಿಂದಲೂ ನೀನೇ ನನ್ನ ನಂಬಿಕೆ II</verse>
				<verse number="6">ಹುಟ್ಟಿನಿಂದಲೆ ನಾ ನಿನಗಂಟಿಕೊಂಡಿರುವೆನಯ್ಯಾ I ಗರ್ಭದಿಂದಲೆ ನೀ ಎನ್ನನು ಕರೆದುತಂದೆಯಯ್ಯಾ I ನಿರಂತರವೂ ನಿನ್ನನು ಕೊಂಡಾಡುತ್ತಿರುವೆನಯ್ಯಾ II</verse>
				<verse number="7">ಹಲವರಿಗೆ ನಾನೊಂದು ಒಗಟು I ನೀನೆನಗೆ ಬಲವಾದ ನೆಲೆಗಟ್ಟು II</verse>
				<verse number="8">ನಿನ್ನ ಗುಣಗಾನ ನನ್ನ ಬಾಯ್ತುಂಬ I ನಿನ್ನ ಘೋಷಣೆ ನನಗೆ ದಿನವಾದ್ಯಂತ II</verse>
				<verse number="9">ವೃದ್ಧಾಪ್ಯದಲಿ ನನ್ನ ತಳ್ಳಿಬಿಡಬೇಡಯ್ಯಾ I ಶಕ್ತಿ ಕುಂದುತ್ತಿರುವಾಗ ಕೈಬಿಡಬೇಡಯ್ಯಾ II</verse>
				<verse number="10">ನನಗೆದುರಾಗಿ ಶತ್ರುಗಳಾಲೋಚಿಸುತಿಹರಯ್ಯಾ I ನನ್ನ ಕೊಲೆಗಾಗಿ ಒಂದುಗೂಡಿ ಹೊಂಚಿಸುತಿಹರಯ್ಯಾ II</verse>
				<verse number="11">“ಹಿಡಿಯಿರಿ ಬೆನ್ನಟ್ಟಿ, ದೇವನವನನ್ನು ಕೈಬಿಟ್ಟಿಹನು I ರಕ್ಷಿಸುವಂಥವರಾರು ಇನ್ನಿಲ್ಲ” ಎನ್ನುತಿಹರು II</verse>
				<verse number="12">ಓ ದೇವಾ, ದೂರವಾಗಿರಬೇಡಯ್ಯಾ I ನೆರವಾಗಲು ಬೇಗ ತ್ವರೆಮಾಡಯ್ಯಾ II</verse>
				<verse number="13">ಆಶಾಭಂಗವು ದಹಿಸಿಬಿಡಲಿ ನನ್ನ ಪ್ರಾಣ ಕಂಟಕರನು I ನಿಂದಾಪಮಾನ ಕವಿದುಬಿಡಲಿ ನನಗೆ ಕೇಡು ಬಗೆವವರನು II</verse>
				<verse number="14">ನಾನಂತು ನಂಬಿರುವೆ ನಿನ್ನ ನಿರಂತರವಾಗಿ I ನಿನ್ನನು ಕೀರ್ತಿಸುತ್ತಿರುವೆ ಅಧಿಕಾಧಿಕವಾಗಿ II</verse>
				<verse number="15">ವರ್ಣಿಸುವೆನು ದಿನವೆಲ್ಲ ನಿನ್ನ ನ್ಯಾಯನೀತಿಯನು I ವಿವರಿಸಲು ಅಸದಳವಾದ ನಿನ್ನಗಣಿತ ರಕ್ಷಣೆಯನು II</verse>
				<verse number="16">ಸ್ವಾಮಿ ದೇವಾ, ಸ್ಮರಿಸುವೆನು ನಿನ್ನ ಮಹತ್ಕಾರ್ಯಗಳನೆ I ಪ್ರಕಟಪಡಿಸುವೆನು ನಿನ್ನೊಬ್ಬನ ನ್ಯಾಯನೀತಿಯನೆ II</verse>
				<verse number="17">ದೇವಾ, ಬಾಲ್ಯಾರಭ್ಯ ನನಗೆ ಬೋಧಿಸಿರುವೆಯಲ್ಲವೆ? I ನಿನ್ನ ಅದ್ಭುತಕಾರ್ಯಗಳನೆಂದಿಗು ನಾ ಘೋಷಿಸುತ್ತಿರುವೆ II</verse>
				<verse number="18">ದೇವಾ, ನರೆಯ ಮುದುಕನಾಗಿರುವಾಗ ನನ್ನ ಕೈ ಬಿಡಬೇಡಯ್ಯಾ I ನಿನ್ನ ಪರಾಕ್ರಮವನು ಮುಂದಿನ ಪೀಳಿಗೆಗೆ ಸಾರುವ ತನಕ ಬೇಡವಯ್ಯಾ I ನಿನ್ನ ಪ್ರತಾಪವನು ತಲತಲಾಂತರದವರೆಗೆ ಪ್ರಕಟಿಸುವೆನಯ್ಯಾ II</verse>
				<verse number="19">ನಿನ್ನ ಶಕ್ತಿ, ನಿನ್ನ ನೀತಿ ದೇವಾ, ಗಗನ ಮುಟ್ಟುತ್ತಿಹವು I ಮಹತ್ಕಾರ್ಯಗಳೆಸಗಿದ ನಿನಗೆ ದೇವಾ, ಯಾರು ಸಾಟಿಯು? II</verse>
				<verse number="20">ದೇವಾ, ಈಡು ಮಾಡಿದೆಯೆನ್ನನು ಕಷ್ಟಸಂಕಟಗಳಿಗೆ I ಪುನಶ್ಚೇತನಗೊಳಿಸೀಗ, ಭೂತಳದಿಂದೆತ್ತು ಮೇಲಕೆ II</verse>
				<verse number="21">ನನ್ನ ಗೌರವವನು ಅಧಿಕರಿಸಯ್ಯಾ I ಮರಳಿ ನೆಮ್ಮದಿಯನು ಪಾಲಿಸಯ್ಯಾ II</verse>
				<verse number="22">ನಿನ್ನ ಸತ್ಯತೆಗಾಗಿ ಓ ಎನ್ನ ದೇವಾ I ಕಿನ್ನರಿಯನು ನುಡಿಸುತಾ ಭಜಿಸುವೆನಯ್ಯಾ II ಇಸ್ರಯೇಲಿನ ಆ ಪರಮಪಾವನ ಸ್ವಾಮಿಯ I ವೀಣೆವಾದ್ಯದೊಂದಿಗೆ ಕೀರ್ತಿಸುವೆನಯ್ಯಾ II</verse>
				<verse number="23">ಮಧುರದನಿಗೈವುದು ಎನ್ನಧರ ನಿನ್ನ ಗುಣಗಾನದಲಿ I ನೀನುದ್ಧರಿಸಿದ ಎನ್ನ ಮನ ಭಾಗಿಯಾಗುವುದಾ ಗಾನದಲಿ II</verse>
				<verse number="24">ನನಗೆ ಕೇಡು ಬಗೆದವರಿದೋ ಪಡೆದರು ನಿಂದೆ ಅಪಮಾನವನು I ದಿನವೆಲ್ಲ ವರ್ಣಿಪುದೆನ್ನ ನಾಲಿಗೆ ನಿನ್ನೀ ನೀತಿಸಾಧನೆಯನು II</verse>
			</chapter>
			<chapter number="72">
				<verse number="1">ತಿಳಿಸು ನಿನ್ನ ನ್ಯಾಯವನು ದೇವಾ, ರಾಜನಿಗೆ I ಕಲಿಸು ನಿನ್ನ ನೀತಿಯನು ರಾಜಕುವರನಿಗೆ II</verse>
				<verse number="2">ಆತನಾಳಲಿ ನಿನ್ನ ಪ್ರಜೆಯನು ನೀತಿಯಿಂದ I ಪರಿಪಾಲಿಸಲಿ ದೀನದಲಿತರನು ನ್ಯಾಯದಿಂದ II</verse>
				<verse number="3">ಬೆಟ್ಟಗುಡ್ಡಗಳಿಂದ ಬರಲಿ ಸಮೃದ್ಧಿ I ನಿನ್ನ ಪ್ರಜೆಗೆ ಫಲಿಸಲಿ ನ್ಯಾಯನೀತಿ II</verse>
				<verse number="4">ದೀನದಲಿತರನಾತ ಉದ್ಧರಿಸಲಿ I ಬಡಬಗ್ಗರಿಗೆ ನ್ಯಾಯ ದೊರಕಿಸಲಿ I ಪ್ರಜಾಹಿಂಸಕರನು ಸದೆಬಡಿಯಲಿ II</verse>
				<verse number="5">ಆತನು ಬಾಳಲಿ ಆಚಂದ್ರಾರ್ಕನಾಗಿ I ತಲತಲಾಂತರಕು ಭಯಭಕುತಿಯಿಂದಿರಲಿ II</verse>
				<verse number="6">ಹುಲ್ಲುಕೊಯ್ದ ಹೊಲದ ಮೇಲೆ ಸುರಿವ ವೃಷ್ಟಿಯಂತೆ I ಬರಲಿ ಆತ ಒಣನೆಲವ ತೋಯ್ವ ಹದಮಳೆಯಂತೆ II</verse>
				<verse number="7">ಬೆಳೆಯಲಿ ಆತನ ಪಾಲನೆಯಲಿ ನ್ಯಾಯನೀತಿ I ಬೆಳಗಲಿ ಚಂದ್ರನಂತೆ ಸದಾ ಸಂಪೂರ್ಣ ಶಾಂತಿ II</verse>
				<verse number="8">ಸಾಗರದಿಂದ ಸಾಗರದವರೆಗಿರಲಿ ಆತನ ಆಧಿಪತ್ಯ I ಮಹಾ ನದಿಯಿಂದ ಬುವಿ ಎಲ್ಲೆಯವರೆಗಿರಲಿ ಆತನ ಪ್ರಭುತ್ವ II</verse>
				<verse number="9">ಅರಣ್ಯವಾಸಿಗಳು ಅರಸನಿಗೆ ಅಡ್ಡಬೀಳಲಿ I ಆತನ ಕಡುವೈರಿಗಳು ನೆಲದ ಮಣ್ಣು ಮುಕ್ಕಲಿ II</verse>
				<verse number="10">ಕಪ್ಪಗಳನರ್ಪಿಸಲಿ ತಾರ್ಷಿಷ್ ಹಾಗೂ ದ್ವೀಪದ್ವೀಪದ ರಾಜರುಗಳು I ಕಾಣಿಕೆಗಳ ತಂದೊಪ್ಪಿಸಲಿ ಶೆಬಾ ಹಾಗೂ ಸೆಬಾದ ರಾಜರುಗಳು II</verse>
				<verse number="11">ರಾಜರುಗಳು ಸಾಷ್ಟಾಂಗವೆರಗಲಿ ಆತನಿಗೆ I ರಾಷ್ಟ್ರ, ಘನರಾಷ್ಟ್ರಗಳು ಸೇವೆಸಲ್ಲಿಸಲಿ ಆತನಿಗೆ II</verse>
				<verse number="12">ಏಕೆನೆ ಕಾಪಾಡುವನಾತ ಮೊರೆಯಿಡುವ ಬಡವರನು I ಉದ್ಧರಿಸುವನಾತ ದಿಕ್ಕಿಲ್ಲದ ದೀನದಲಿತರನು II</verse>
				<verse number="13">ದೀನದರಿದ್ರರಿಗೆ ದಯೆಯ ತೋರುವನು I ದಲಿತರ ಪ್ರಾಣವನು ಕಾಪಾಡುವನು II</verse>
				<verse number="14">ಅವರ ಜೀವ ಆತನ ದೃಷ್ಟಿಯಲಿ ಅಮೂಲ್ಯ I ಜುಲುಮೆ ಶೋಷಣೆಗಳ ನೀಗಿಪುದು ಆತನ ಕಾರ್ಯ II</verse>
				<verse number="15">ಅರಸ ಬಾಳಲಿ ಚಿರಕಾಲ; ದೊರಕಲಿ ಆತನಿಗೆ ಶೆಬಾದ ಬಂಗಾರ I ಜರುಗಲಿ ಪ್ರಾರ್ಥನೆ ಸದಾಕಾಲ; ಆಶೀರ್ವಾದ ಸಿಗಲಿ ಅನವರತ II</verse>
				<verse number="16">ಸಮೃದ್ಧಿಯಾಗಲಿ ನಾಡಿನ ದವಸಧಾನ್ಯ ನೆಲಮಲೆಗಳ ಮೇಲೆ I ಸೊಂಪಾಗಲಿ ಅದರ ಹಣ್ಣುಹಂಪಲು ಲೆಬನೋನಿನ ಮರಗಳಂತೆ I ಹುಲುಸಾಗಲಿ ನಗರ ನಿವಾಸಿಗಳ ಸಂಖ್ಯೆ ಬಯಲಿನ ಹುಲ್ಲಿನಂತೆ II</verse>
				<verse number="17">ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II</verse>
				<verse number="18">ಸುತ್ಯರ್ಹನು ಸ್ವಾಮಿದೇವನು, ಇಸ್ರಯೇಲರ ದೇವನು I ಆತನೋರ್ವನೇ ಮಹತ್ಕಾರ್ಯಗಳನು ಎಸಗುವಂತವನು II</verse>
				<verse number="19">ಮಹಿಮಾಯುಕ್ತ ಆತನ ನಾಮಕೆ ಸದಾಕಾಲವು ಸ್ತುತಿ I ಆಮೆನ್ ಆಮೆನ್ ಭೂಮಂಡಲವೆಲ್ಲಾ ಆತನ ಪ್ರಭಾವ ಪೂರ್ತಿ I ಇತಿ, ಜೆಸ್ಸೆಯನ ಕುವರ ದಾವೀದನ ಪ್ರಾರ್ಥನೆಗಳ ಸಮಾಪ್ತಿ II</verse>
			</chapter>
			<chapter number="73">
				<verse number="1">ದೇವನು ಎನಿತೋ ಒಳ್ಳೆಯವನು ಇಸ್ರಯೇಲಿಗೆ I ದಯಾಪರನಾತನು ಶುದ್ಧಹೃದಯಿಗಳಿಗೆ II</verse>
				<verse number="2">ದುರ್ಜನರು ಧನಿಕರಾಗುವುದ ಕಂಡಾಗ I ಗರ್ವಿಗಳ ನೋಡಿ ನಾನಸೂಯೆಗೊಂಡಾಗ II</verse>
				<verse number="3">ತಡವರಿಸಿದವು ನನ್ನ ಕಾಲುಗಳು I ಜಾರಿ ಬೀಳಲಿದ್ದವು ಹೆಜ್ಜೆಗಳು II</verse>
				<verse number="4">ಆ ಜನರಿಗೆ ನೋವುಕಾವೆಂಬುದಿಲ್ಲ I ಅವರ ದೇಹ ಸಬಲವಾಗಿದೆಯಲ್ಲ! II</verse>
				<verse number="5">ಇತರರಂತೆ ಅವರಿಗೆ ಸಂಕಟವಿಲ್ಲವಲ್ಲಾ! I ರೋಗರುಜೆ ಅವರಿಗಂಟುವುದಿಲ್ಲವಲ್ಲಾ! II</verse>
				<verse number="6">ಈ ಕಾರಣ ಗರ್ವವೇ ಅವರಿಗೆ ಕಂಠಮಾಲೆ I ಹಿಂಸಾಚಾರವೇ ಅವರಿಗೆ ಬಟ್ಟೆಬರೆ II</verse>
				<verse number="7">ದೋಷ ಹೊರಸೂಸುತ್ತಿದೆ ಕೊಬ್ಬಿನಾ ಕಣ್ಗಳಿಂದ I ದುಷ್ಕಲ್ಪನೆಗಳು ತುಳುಕುತಿವೆ ಹೃನ್ಮನಗಳಿಂದ II</verse>
				<verse number="8">ಕೇಡು ಮಾತು, ಕೆಣಕು ಮಾತು ಅವರದು I ಜೊತೆಗೆ ಬಲಾತ್ಕಾರದ ಸೊಕ್ಕು ಮಾತು II</verse>
				<verse number="9">ನಾಕವನೆ ತಾಕುತಿದೆ ಅವರ ಗರ್ವದ ನುಡಿ I ಜಗದಲಿ ಹರಡುತಿದೆ ಅವರ ದರ್ಪದ ನುಡಿ II</verse>
				<verse number="10">ಎಂತಲೆ ಜನರವರ ಕಡೆ ತಿರುಗಿಕೊಳ್ಳುವರು I ನೀರಂತೆ ಅವರ ಮಾತನು ಹೀರಿಕೊಳ್ಳುವರು II</verse>
				<verse number="11">“ಆ ದೇವನೆಂತು ಕಂಡುಹಿಡಿದಾನು?” ಎಂಬರು I “ಪರಾತ್ಪರನು ಪರಿಜ್ಞನೆ?” ಎಂದುಕೊಳ್ವರು II</verse>
				<verse number="12">ದುರ್ಜನರಿದೊ ನಿಶ್ಚಿಂತರಾಗಿಹರು I ಸಿರಿಮೇಲೆ ಸಿರಿಯ ಶೇಖರಿಸುತಿಹರು II</verse>
				<verse number="13">ನಾ ನಿರ್ಮಲಚಿತ್ತನಾಗಿ ಬಾಳಿದ್ದು ವ್ಯರ್ಥವೋ? I ಶುದ್ಧಹಸ್ತನಾಗಿ ನಡೆದುಕೊಂಡುದು ನಿರರ್ಥಕವೋ? II</verse>
				<verse number="14">ಏಕೆನೆ, ದಿನವಿಡಿ ನಾ ಬಾಧೆಪಡುತ್ತಿರುವೆ I ದಿನದಿನವು ದಂಡನೆಗೆ ಗುರಿಯಾಗುತ್ತಿರುವೆ II</verse>
				<verse number="15">ನಾ ಬಾಯ್ದೆರೆದು ನುಡಿದಿದ್ದೆನಾದರೆ ಈ ಪರಿ I ನಿನ್ನ ಭಕ್ತಕುಲಕೆ ನಾ ದ್ರೋಹಿಯೇ ಸರಿ II</verse>
				<verse number="16">ಇದರ ಮರ್ಮವನು ನಾ ಬಗೆಹರಿಸಲು ಯತ್ನಿಸೆ I ತೋಚಿತೆನಗಿದು ಬಿಡಿಸಲಾಗದಂಥ ಸಮಸ್ಯೆ II</verse>
				<verse number="17">ಆದರೆ ದೇವಾಲಯವನು ಹೊಕ್ಕು ನಿಂತಾಗ I ಆ ಜನರ ಅಂತಿಮ ಗತಿಯನಾಲೋಚಿಸಿದಾಗ I ಋಜುವಾದ ಜ್ಞಾನೋದಯ ಆಯಿತೆನಗಾಗ II</verse>
				<verse number="18">ಜಾರು ನೆಲದಲಿ ಆ ಜನರನು ನೀ ನಿಲ್ಲಿಸಿರುವೆ I ನಿಶ್ಚಯವಾಗಿ ನೀ ಬೀಳಿಸಿ ಅವರನು ನಾಶಮಾಡುವೆ II</verse>
				<verse number="19">ಕ್ಷಣ ಮಾತ್ರದಲಿ ಅಳಿದು ಹಾಳಾಗುವರು I ಭೀಕರವಾಗಿ ನಿರ್ಮೂಲವಾಗುವರು II</verse>
				<verse number="20">ನಿದ್ರೆಯಿಂದೆದ್ದವನು ಕನಸನ್ನು ತೃಣೀಕರಿಸುವಂತೆ I ಪ್ರಭು ನೀನೆದ್ದು ಕಡೆಗಣಿಸುವೆ ಅವರನು ಮಾಯೆಯಂತೆ II</verse>
				<verse number="21">ಹೃದಯ ನೊಂದು ಬೆಂದಿರಲು I ಮನದಲಿ ಅಲಗು ನಾಟಿರಲು II</verse>
				<verse number="22">ನಾ ಮಂದಮತಿಯಾಗಿದ್ದೆ ಅರಿವಿಲ್ಲದೆ I ನಾ ವನ್ಯಮೃಗನಂತಿದ್ದೆ ನಿನ್ನ ಮುಂದೆ II</verse>
				<verse number="23">ಆದರೂ ನಾನಿರುವೆ ನಿನ್ನ ಸನ್ನಿಧಿಯಲಿ I ನೀ ಹಿಡಿದಿರುವೆ ನನ್ನ ಬಲಗೈಯನು ಭದ್ರವಾಗಿ II</verse>
				<verse number="24">ಸೂಕ್ತ ಸಲಹೆಯನಿತ್ತು ಮುಂದಕೆನ್ನ ನಡೆಸು I ಅಂತ್ಯದಲಿ ನಿನ್ನ ಮಹಿಮೆಗೆನ್ನ ಸೇರ್ಪಡಿಸು II</verse>
				<verse number="25">ನನಗೆ ನೀನಲ್ಲದೆ ಇನ್ನಾರಿಹರು ಪರದಲಿ I ನಿನ್ನ ಹೊರತು ನನಗೇನು ಬೇಕಿಲ್ಲ ಇಹದಲಿ II</verse>
				<verse number="26">ನನ್ನ ತನುಮನಗಳೆಲ್ಲವೂ ಸೊರಗಿಹೋದರೂ I ನನ್ನಾತ್ಮದ ಶಕ್ತಿ, ಶಾಶ್ವತ ಸೊತ್ತು ದೇವರು II</verse>
				<verse number="27">ವಿನಾಶವಾಗುವರು ನಿನ್ನಿಂದ ದೂರ ಸರಿವವರು I ಧ್ವಂಸವಾಗುವರು ನಿನಗೆ ದ್ರೋಹವೆಸಗಿದವರು II</verse>
				<verse number="28">ನಿನ್ನ ಸಾನ್ನಿಧ್ಯ ಸ್ವಾಮಿದೇವಾ, ನನಗೆಂಥ ಸೌಭಾಗ್ಯ I ನಿನ್ನ ಸತ್ಕಾರ್ಯಗಳ ಸಾರಲೆಂದೆ ನಿನ್ನನಾಶ್ರಯಿಸಿಕೊಂಡೆನಯ್ಯಾ II</verse>
			</chapter>
			<chapter number="74">
				<verse number="1">ಹೇ ದೇವಾ, ನಮ್ಮ ನೀಪರಿ ವರ್ಜಿಸಿಬಿಟ್ಟೆ ಏಕೆ? I ನೀ ಪಾಲಿಪ ಮಂದೆಯ ಮೇಲೀಗ ಉರಿಗೋಪವೇಕೆ? II</verse>
				<verse number="2">ನೆನಸಿಕೊ ಆದಿಯಲೆ ನೀ ಸಂಪಾದಿಸಿಕೊಂಡ ಸಭೆಯನು I ಸ್ಮರಿಸಿಕೊ ಸೊತ್ತಾಗಿ ನೀ ರಕ್ಷಿಸಿಕೊಂಡ ಗೋತ್ರವನು I ಜ್ಞಾಪಿಸಿಕೊ ನಿನ್ನ ಸದನವಾಗಿದ್ದ ಸಿಯೋನ್ ಶಿಖರವನು II</verse>
				<verse number="3">ಬಿಜಯಮಾಡು ಪಾಳುಬಿದ್ದಿರುವ ಹಳೆಯ ಆಲಯಕೆ I ಶತ್ರು ಕೆಡವಿಹನು ನೋಡು ಗರ್ಭಗುಡಿಯನೇ ಕೆಳಕೆ II</verse>
				<verse number="4">ವೈರಿಗಳಾರ್ಭಟ ನಿನ್ನ ದರ್ಶನಾಲಯದ ಮಧ್ಯೆಯಲಿ I ಅವರ ಜಯ ಬಾವುಟ ಪವಿತ್ರ ಚಿಹ್ನೆಗಳಿಗೆ ಪ್ರತಿಯಾಗಿ II</verse>
				<verse number="5">ಕಾಡಿನಲೋ ಎಂಬಂತೆ ಕೊಡಲಿಯನೆತ್ತಿ ಹಿಡಿದು I ದೇಗುಲದಲಿ ಕೈಗೊಡಲಿ, ಚಮಟಿಗಳ ಪಿಡಿದು I ನಾಶಮಾಡುತಿಹರು ನೋಡು ಕೆತ್ತನೆಗಳ ಕಡಿದು II</verse>
				<verse number="6"></verse>
				<verse number="7">ಅಗ್ನಿಗಾಹುತಿ ಮಾಡಿಹರು ನಿನ್ನ ನಾಮದ ಮಂದಿರವನು I ಹೊಲಸುಮಾಡಿ, ನೆಲಸಮಮಾಡಿಹರಿದೊ ನಿನ್ನ ದೇಗುಲವನು II</verse>
				<verse number="8">‘ನಾಶ ಮಾಡೋಣ ಈ ಜನರನು’ ಎಂದಾಡಿಕೊಂಡಿಹರು I ದೇಶದ ಸಭಾಮಂದಿರಗಳನ್ನೆಲ್ಲ ಭಸ್ಮಮಾಡಿಹರು II</verse>
				<verse number="9">ಆರಾಧನಾ ಚಿಹ್ನೆಗಳಿಲ್ಲ, ಪ್ರವಾದಿಗಳು ನಮಗಿಲ್ಲ I ಈ ಪರಿಸ್ಥಿತಿ ಎಲ್ಲಿಯತನಕ? ಬಲ್ಲವರಾರೂ ಇಲ್ಲ II</verse>
				<verse number="10">ಎಲ್ಲಿಯತನಕ ದೇವಾ, ಶತ್ರುನಿಂದೆಗೆ ನೀ ಗುರಿಯಾಗುವೇ? I ಅನವರತ ನಿನ್ನ ನಾಮವನು ಧಿಕ್ಕರಿಸುವುದು ಸರಿಯೇ? II</verse>
				<verse number="11">ಚಾಚಿದಾ ಬಲಗೈಯನೇಕೆ ಹಿಂದೆಗೆದುಕೊಂಡೆ I ಬಚ್ಚಿಟ್ಟಾ ಕೈಯಿಂದ ನೀನವರನು ಚಚ್ಚಿಬಿಡೈ II</verse>
				<verse number="12">ಆದಿಯಿಂದ ದೇವಾ, ನೀನೇ ನನಗೆ ಅರಸನು I ಸಾಧಿಸುತ್ತಿರುವೆ ಜಗದೊಳುದ್ಧಾರವನು II</verse>
				<verse number="13">ಸ್ವಶಕ್ತಿಯಿಂದ ಸಮುದ್ರವನೆ ಭೇದಿಸಿದೆ ನೀನು I ಜಲರಾಶಿಯ ಭುಜಂಗಗಳ ತಲೆ ಜಜ್ಜಿದಾತ ನೀನು II</verse>
				<verse number="14">	ಲೆವಿಯಾತಾನನ ಶಿರಗಳ ಖಂಡನ ಮಾಡಿದವ ನೀನು I ಕಾಡು ಮೃಗಕ್ಕವನನು ಕೂಳಾಗಿಸಿದವ ನೀನು II</verse>
				<verse number="15">ಒರತೆ ಊಟೆಗಳ ಉಕ್ಕಿಸಿದಾತ ನೀನು I ಹರಿವ ನದಿಗಳ ಬತ್ತಿಸಿಬಿಟ್ಟವ ನೀನು II</verse>
				<verse number="16">ಹಗಲಿರುಳುಗಳಿಗೆ ನಿಯಾಮಕ ನೀನು I ರವಿತಾರೆಗಳ ನಿರ್ಮಾಪಕ ನೀನು II</verse>
				<verse number="17">ಜಗದೆಲ್ಲೆ ಮೇರೆಗಳನು ನಿಗದಿ ಮಾಡಿದೆ ನೀನು I ಶೀತೋಷ್ಣಕಾಲಗಳನು ನೇಮಿಸಿದವನು ನೀನು II</verse>
				<verse number="18">ನೆನಪಿರಲಿ ಪ್ರಭು, ಶತ್ರು ನಿನಗೆ ಮಾಡಿದಪಮಾನ I ನಿನ್ನ ಪೂಜ್ಯ ನಾಮಕೆ ದುರುಳರು ಕಕ್ಕಿದ ದೂಷಣ II</verse>
				<verse number="19">ಕೊಡಬೇಡ ನಿನ್ನ ಬೆಳವಕ್ಕಿಯ ಪ್ರಾಣವ ಕಾಡುಮೃಗಕೆ I ನೀ ಮರೆತುಬಿಡಬೇಡ ನಿನ್ನ ದೀನದಲಿತರನು ಒಮ್ಮೆಗೆ II</verse>
				<verse number="20">ನಿನ್ನೊಡಂಬಡಿಕೆಯನು ಗಮನವಿಟ್ಟು ಮಾನ್ಯಮಾಡು I ಕಗ್ಗತ್ತಲಿಗು, ಬಾಧಕರಿಗು ಬೀಡಾಗಿದೆ ನಾಡು II</verse>
				<verse number="21">ಕುಗ್ಗಿದವರು ಹಿಂದಿರುಗದಿರಲಿ ಅವಮಾನದಿಂದ I ಬಡವರು ಕೀರ್ತಿಸಲಿ ನಿನ್ನ ನಾಮವನು ಭಕ್ತಿಯಿಂದ II</verse>
				<verse number="22">ಎಚ್ಚೆತ್ತು, ದೇವಾ, ನಡೆಸು ನಿನ್ನ ನ್ಯಾಯವನು I ಗಮನಿಸು, ಅನುದಿನ ದುರ್ಮತಿ ನಿನ್ನ ನಿಂದಿಪುದನು II</verse>
				<verse number="23">ಮರೆಯದಿರು ನಿನ್ನಾ ವಿರೋಧಿಗಳ ಗದ್ದಲವನು I ವೈರಿಯೆಬ್ಬಿಸುತ್ತಿರುವ ನಿರಂತರ ದೊಂಬಿಯನು II</verse>
			</chapter>
			<chapter number="75">
				<verse number="1">ವಂದನೆ ಹೇ ದೇವಾ, ಕೃತಜ್ಞತಾ ವಂದನೆ I ನೀ ಸಾಧಿಸಿದ ಸತ್ಕಾರ್ಯಗಳ ವಿವರಣೆ I ತಂದಿದೆ ನಮಗೆ ನಿನ್ನ ನಾಮದ ಸ್ಮರಣೆ II</verse>
				<verse number="2">ಈ ಪರಿ ನುಡಿದಿರುವನಾ ದೇವನು: I “ಕ್ಲುಪ್ತಕಾಲದಲಿ ನಾ ನೀಡುವೆನು I ತೀರ್ಪನು, ನ್ಯಾಯವಾದ ತೀರ್ಪನು II</verse>
				<verse number="3">ಇಳೆಯು ಭೂನಿವಾಸಿಗಳ ಸಮೇತ ತಳಮಳಗೊಳ್ಳಲು I ಅದರ ತಳಹದಿಯ ಬಿಗಿಹಿಡಿದಿರುವವನು ನಾನಿಲ್ಲದಿನ್ನಾರು? II</verse>
				<verse number="4">ಗರ್ವಿಗಳೇ, ಸಾಕುಮಾಡಿ ನಿಮ್ಮ ಸೊಕ್ಕುಮಾತುಗಳನು I ದುರ್ಜನರೇ, ತೋರಬೇಡಿ ನಿಮ್ಮ ಕೋರೆಕೊಂಬುಗಳನು II</verse>
				<verse number="5">ಕಾಣಿಸಿಕೊಳ್ಳದಿರಲಿ ನಿಮ್ಮ ಕೋರೆಕೊಂಬುಗಳು I ಮಾತೆತ್ತದಿರಲಿ ನಿಮ್ಮಗಳ ಕೊಬ್ಬಿದಾ ಕಂಠಗಳು” II</verse>
				<verse number="6">ಪೂರ್ವಪಶ್ಚಿಮದಿಂದ ಬರುವುದಿಲ್ಲ ಉದ್ಧಾರ I ಅರಣ್ಯದಿಂದ ದೊರಕುವುದಿಲ್ಲ ಜೀವೋದ್ಧಾರ II</verse>
				<verse number="7">ನ್ಯಾಯತೀರ್ಪು ಬರುವುದು ದೇವನಿಂದಲೇ I ಉನ್ನತಿಯು ಅವನತಿಯು ಆತನಿಂದಲೇ II</verse>
				<verse number="8">ಪ್ರಭುವಿನ ಕರಗಳಲ್ಲಿದೆ ಕೋಪಕೊಡ ಒಂದು I ತುಂಬಿದೆ ಅಮಲುಮಿಶ್ರ ರೌದ್ರರಸದಿಂದದು II ಅದನವನು ಸುರಿಯಲು ಕುಡಿವರು ಜಗದ ದುರುಳರು I ಮಡ್ಡಿಯನು ಕೂಡ ಬಿಡದೆ ಕುಡಿವರೆಲ್ಲರು II</verse>
				<verse number="9">ನಾನಾದರೊ ಕೀರ್ತಿಸುವೆನು ಯಕೋಬ ದೇವರನು I ಮಾಡುವೆನು ಅನವರತ ಆತನ ಗುಣಗಾನವನು II</verse>
				<verse number="10">ಕತ್ತರಿಸುವನು ಕೆಡುಕರ ಕೋರೆಕೋಡುಗಳನು I ಎತ್ತರಿಸುವನು ಸಜ್ಜನರ ಕೋರೆಕೊಂಬುಗಳನು II</verse>
			</chapter>
			<chapter number="76">
				<verse number="1">ಸುಪ್ರಸಿದ್ಧನು ದೇವನು ಜುದೇಯನಾಡಿನಲಿ I ಸುಪ್ರಖ್ಯಾತ ಆತನ ನಾಮ ಇಸ್ರಯೇಲಿನಲಿ II</verse>
				<verse number="2">ಆತನ ಬಿಡಾರ ಸಾಲೇಮಿನಲಿ I ಆತನ ನಿವಾಸ ಸಿಯೋನಿನಲಿ II</verse>
				<verse number="3">ಚೂರು ಚೂರು ಮಾಡಿಹನಲ್ಲಿ ಥಳಥಳಿಸುವ ಬಾಣಗಳನು I ಖಡ್ಗ, ಗುರಾಣಿ ಎಂಬೆಲ್ಲ ಯುದ್ಧಾಯುಧಗಳನು II</verse>
				<verse number="4">ಹೇ ದೇವಾ, ನೀ ತೇಜೋಮಯನು I ಸ್ಥಿರಗಿರಿಗಳಿಗಿಂತ ಗಂಭೀರನು II</verse>
				<verse number="5">ಕೆಚ್ಚೆದೆಯ ವೀರರು ಸುಲಿಗೆಯಾಗಿ ಚಿರನಿದ್ರೆಯಲಿಹರು I ಕೈಕತ್ತರಿಸಿದಂತಿರುವರು ಆ ರಣಧೀರರೆಲ್ಲರು II</verse>
				<verse number="6">ನಿನ್ನ ಒಂದು ಗದರಿಕೆಗೆ, ಯಕೋಬನ ದೇವನೆ I ರಥಾಶ್ವಬಲಗಳೆಲ್ಲಾ ಬಿದ್ದಿವೆ ಬಿಮ್ಮನೆ II</verse>
				<verse number="7">ನೀನಾದರೋ ದೇವಾ, ಮಹಾಭಯಂಕರನು I ಸಿಟ್ಟೇರಿದ ನಿನ್ನ ಮುಂದೆ ಯಾವನು ನಿಂತಾನು? II</verse>
				<verse number="8">ನಿನ್ನ ನಿರ್ಣಯ ಸಗ್ಗದಿಂದ ಕೇಳಿಸಿದಾಗ I ಭಯಭೀತಿಯಿಂದ ತೆಪ್ಪಗಾಯ್ತು ಸಮಸ್ತ ಜಗ II</verse>
				<verse number="9">ನ್ಯಾಯಸ್ಥಾಪನೆಗೆ ದೇವನೆದ್ದು ನಿಂತಾಗ I ಧರೆಯ ದೀನರನುದ್ಧರಿಸಲು ಅನುವಾದಾಗ I ಭಯಭೀತಿಯಿಂದ ತೆಪ್ಪಗಾಯ್ತು ಸಮಸ್ತ ಜಗ II</verse>
				<verse number="10">ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II</verse>
				<verse number="11">ನಿಮ್ಮ ದೇವನಾದ ಸ್ವಾಮಿಗೆ ಸಲ್ಲಿಸಿರಿ ಹೊತ್ತ ಹರಕೆ I ಸುತ್ತಣರೆಲ್ಲರು ಸಮರ್ಪಿಸಲಿ ಭಯಂಕರನಿಗೆ ಕಾಣಿಕೆ II</verse>
				<verse number="12">ಅರಸರ ದರ್ಪವನಡಗಿಸಿಬಿಡುವನು I ಭೂಪತಿಗಳಿಗೋ ಕಂಪನ ಕೊಡುವನು II</verse>
			</chapter>
			<chapter number="77">
				<verse number="1">ಮೊರೆಯಿಡುವೆನು, ಕೂಗಿ ಮೊರೆಯಿಡುವೆನು I ಸ್ವಾಮಿ ದೇವನು ನನಗೆ ಕಿವಿಗೊಡುವನು II</verse>
				<verse number="2">ಸಂಕಟದ ವೇಳೆಯೊಳು ಸ್ವಾಮಿಯನು ನಾ ಕರೆದೆ I ಇರುಳೆಲ್ಲ ಆಯಾಸವರಿಯದೆ ಕೈಚಾಚಿದೆ I ಎನ್ನ ಮನಸ್ಸಿತ್ತು ದುಃಖಶಮನಗೊಳ್ಳದೆ II</verse>
				<verse number="3">ದೇವರನು ಸ್ಮರಿಸಿ ನಿಟ್ಟುಸಿರಿಡುತಿಹೆನು I ಹಂಬಲಿಸಿ ಮನದಲೇ ನಾ ಮರುಗುತಿಹೆನು II</verse>
				<verse number="4">ನಿದ್ರಿಸದಂತೆ ನೀನೆನ್ನ ಕಣ್‍ಗಳ ತೆರೆದಿರುವೆ I ನುಡಿಯಲಾಗದ ತೆರದಿ ನಾ ತಳಮಳಗೊಂಡಿರುವೆ II</verse>
				<verse number="5">ನೆನಪಿಗೆ ತಂದುಕೊಂಡೆ ಹಳೆಯ ದಿನಗಳನು I ಸ್ಮರಿಸಿಕೊಂಡೆ ಉರುಳಿಹೋದ ವರುಷಗಳನು II</verse>
				<verse number="6">ನಿನ್ನ ಧ್ಯಾನ ಬರುತ್ತದೆ ನೆನಪಿಗೆ ರಾತ್ರಿಯೊಳು I ಆಲೋಚನೆ ಸುಳಿಯುತ್ತದೆ ನನ್ನಾಂತರ್ಯದೊಳು I ಈ ತೆರನ ಪ್ರಶ್ನೆಯೇಳುತ್ತದೆನ್ನ ಮನದೊಳು: II</verse>
				<verse number="7">ಕೈಬಿಟ್ಟುಬಿಡುವನೋ ಪ್ರಭು ಸದಾಕಾಲಕು? I ಕೃಪೆಯನು ತೋರನೋ ಮತ್ತೆಂದೆಂದಿಗೂ? II</verse>
				<verse number="8">ಆತನಚಲ ಪ್ರೀತಿ ಇನ್ನು ಮಾಯವಾಯಿತೋ? I ಆತನ ವಾಗ್ದಾನ ತಲತಲಾಂತರಕು ಮುಗಿಯಿತೋ? II</verse>
				<verse number="9">ಕರುಣೆ ತೋರಲು ದೇವನು ಮರೆತುಬಿಟ್ಟನೋ? I ಕರುಳಿಗೆ ಕೋಪದಿಂದ ಬರೆಹಾಕಿಕೊಂಡನೋ? II</verse>
				<verse number="10">ಆಗ ನಾನು “ನೆನೆಯಲೀಪರಿ, ನನ್ನ ಚಪಲತೆಯೇ ಕಾರಣ I ಮಾಡುವೆನೀಗ ಪರಾತ್ಪರನಾ ಪವಾಡ ವರುಷಗಳ ಸ್ಮರಣ” II</verse>
				<verse number="11">ವರ್ಣಿಸುವೆನು ಪ್ರಭುವಿನ ಮಹತ್ಕಾರ್ಯಗಳೆಲ್ಲವನು I ಸ್ಮರಿಸುವೆ ನೀನಾದಿಯಿಂದ ನಡೆಸಿದ ಅದ್ಭುತಗಳನು II</verse>
				<verse number="12">ಧ್ಯಾನಿಸುವೆ ನಾನಿನ್ನ ಕಾರ್ಯಗಳನೆಲ್ಲ I ಮಾಡುವೆ ಮನನ ನಿನ್ನ ಪವಾಡಗಳನೆಲ್ಲ II</verse>
				<verse number="13">ನಿನ್ನ ಮಾರ್ಗ ದೇವಾ, ಪರಿಶುದ್ಧವಾದುದಯ್ಯಾ I ನಮ್ಮ ದೇವರಂತಹ ಮಹಾ ದೇವರಾರಯ್ಯಾ? II</verse>
				<verse number="14">ಅದ್ಭುತಗಳನು ನಡೆಸುವಂತಹ ದೇವ ನೀನೆಮಗೆ I ತೋರ್ಪಡಿಸಿದೆ ನಿನ್ನಾ ಪರಾಕ್ರಮವನು ಜನತೆಗೆ II</verse>
				<verse number="15">ನಿನ್ನ ಭುಜಬಲದಿಂದ ಯಕೋಬ, ಜೋಸೆಫ್ ವಂಶಜರನು I ಉದ್ಧಾರ ಮಾಡಿದೆ ನಿನ್ನ ಪ್ರಜೆಗಳಾಗಿಹ ಆ ಜನರನು II</verse>
				<verse number="16">ಜಲರಾಶಿಗಳು ದೇವಾ, ನಿನ್ನ ಕಂಡವು I ಕಾಣುತ್ತಲೇ ನಡುಗಿ ತಳಮಳಗೊಂಡವು I ತಳದವರೆಗೂ ಅಲ್ಲಕಲ್ಲೋಲವಾದವು II</verse>
				<verse number="17">ಮಳೆಗರಿಯಿತಾ ಮೇಘಮಂಡಲವು I ಭೋರ್ಗರೆಯಿತಾಗ ಅಂತರಿಕ್ಷವು I ಮಿಂಚಿದವು ಎಲ್ಲೆಡೆ ನಿನ್ನಂಬುಗಳು II</verse>
				<verse number="18">ಮೊಳಗಿತು ನಿನ್ನ ಗುಡುಗು ಬಿರುಗಾಳಿಯಲಿ I ಹೊಳೆಯಿತು ನಿನ್ನ ಮಿಂಚು ಇಡೀ ಲೋಕದಲಿ I ಕಂಪಿಸಿತೀ ಭೂಮಂಡಲ ನಡುನಡುಗಿ II</verse>
				<verse number="19">ಸಾಗರವನೆ ನೀ ತುಳಿದು ನಡೆದೆ I ಮಹಾಸಾಗರವನೆ ನೀ ದಾಟಿದೆ I ಹೆಜ್ಜೆಯ ಗುರುತನೂ ಕಾಣಬಿಡದೆ II</verse>
				<verse number="20">ಕುರುಬನು ತನ್ನ ಕುರಿಮಂದೆಯನು ಕರೆದೊಯ್ಯುವಂತೆ I ಮೋಶೆ, ಆರೋನರಿಂದ ನಿನ್ನ ಪ್ರಜೆಗಳನು ನಡೆಸಿದೆ II</verse>
			</chapter>
			<chapter number="78">
				<verse number="1">ನನ್ನ ಜನರೇ, ಕಿವಿಗೊಡಿ ನನ್ನ ಬೋಧನೆಗೆ I ಗಮನಕೊಡಿ ನಾ ಹೇಳುವ ಮಾತುಗಳಿಗೆ II</verse>
				<verse number="2">ಸಾಮತಿಯೊಂದಿಗೆ ಬೋಧನೆಯನಾರಂಭಿಸುವೆನು I ಹೊರಪಡಿಸುವೆನು ಪೂರ್ವಕಾಲದ ಗೂಡಾರ್ಥಗಳನು II</verse>
				<verse number="3">ಪೇಳ್ವೆವು ನಾವು ಕೇಳಿ ತಿಳಿದುಕೊಂಡವುಗಳನೆ I ಪೂರ್ವಜರೆಮಗೆ ತಿಳಿಸಿದ ಸಂಗತಿಗಳನೆ I ಪ್ರಭುವಿನ ಮಹಿಮೆ ಪರಾಕ್ರಮದ ಪವಾಡಗಳನೆ II</verse>
				<verse number="4">ಮರೆಮಾಡೆವು ಅವರ ಸಂತತಿಯಾದ ನಿಮಗೆ I ವಿವರಿಸುವೆವು ಮುಂಬರಲಿರುವ ಪೀಳಿಗೆಗೆ II</verse>
				<verse number="5">ನೇಮವಿತ್ತನು ಯಕೋಬವಂಶಕೆ I ಶಾಸನಕೊಟ್ಟನು ಇಸ್ರಯೇಲರಿಗೆ II ವಿಧಿಸಿದ ನಿಂತು ನಮ್ಮ ಪೂರ್ವಜನರಿಗೆ I “ಕಲಿಸಿರಿ ಇವನ್ನು ನಿಮ್ಮ ಮಕ್ಕಳಿಗೆ” II</verse>
				<verse number="6">“ಗೊತ್ತಾಗಲಿ ಇವೆಲ್ಲ ಮುಂದಿನ ತಲೆಮಾರಿಗೆ I ತಿಳಿಸುತ್ತ ಹೋಗಲಿ ಮಕ್ಕಳು ಮೊಮ್ಮಕ್ಕಳಿಗೆ” II</verse>
				<verse number="7">ಆಗ ತಮ್ಮ ಪ್ರಾಚೀನ ಪೂರ್ವಿಕರಂತೆ ಅವರಾಗರು I ಮೊಂಡರು, ಅವಿಧೇಯರು, ದೈವದ್ರೋಹಿಗಳು, ಚಪಲಚಿತ್ತರು II</verse>
				<verse number="8">ಮರೆಯರು ನನ್ನ ಮಹತ್ಕಾರ್ಯಗಳನು I ಇಡುವರು ನನ್ನಲ್ಲೇ ಭರವಸೆಯನು I ಕೈಗೊಳ್ಳುವರು ನನ್ನ ಆಜ್ಞೆಗಳನು II</verse>
				<verse number="9">ಎಫ್ರಯಿಮರು ಹೋದರು ಧನುರ್ಧಾರಿಗಳಾಗಿ I ಯುದ್ಧವೇಳೆಯಲಿ ಓಡೋಡಿದರು ಹಿಂದಿರುಗಿ II</verse>
				<verse number="10">ಪಾಲಿಸಲಿಲ್ಲ ಅವರು ದೇವರ ನಿಬಂಧನೆಯನು I ಅನುಸರಿಸಲಿಲ್ಲ ಆತನ ಧರ್ಮಶಾಸ್ತ್ರವನು II</verse>
				<verse number="11">ಮರೆತುಬಿಟ್ಟರವರು ಆತನ ಮಹತ್ಕಾರ್ಯಗಳನು I ತಮ್ಮೆದುರಿನಲ್ಲೇ ಸಾಧಿಸಿದ ಅದ್ಭುತಗಳನು: II</verse>
				<verse number="12">ಆ ಈಜಿಪ್ಟ್ ದೇಶದೊಳು, ಸೋನ್ ಬಯಲು ಸೀಮೆಯೊಳು I ಆತನೆಸಗಿದ ಪವಾಡಗಳು ಪೂರ್ವಜರ ಇದಿರೊಳು II</verse>
				<verse number="13">ದಾಟಿಸಿದನವರನು ಸಮುದ್ರವನೆ ಭೇದಿಸಿ I ಅದರತುಳ ನೀರನು ರಾಶಿಯಾಗಿ ನಿಲ್ಲಿಸಿ II</verse>
				<verse number="14">ಹಗಲಲಿ ಕರೆದೊಯ್ದನು ಮೇಘದ ನೆರಳಲಿ I ಇರುಳೊಳು ನಡೆಸಿದನು ಜ್ವಾಲೆಯ ಬೆಳಕಲಿ II</verse>
				<verse number="15">ಕಾಡಿನಾ ಕಗ್ಗಲ್ಲನು ಸೀಳಿ ಹೊರಡಿಸಿದನು ನೀರನು I ಆಳದ ಸರಸಿಯಿಂದೊ ಎಂಬಂತೆ ಅದನು ಕುಡಿಯಲಿತ್ತನು II</verse>
				<verse number="16">ಬಂಡೆಗಳಿಂದಲೆ ಹೊರಡಿಸಿದನು ನೀರನು I ನದಿಗಳಂತೆಯೆ ಹರಿಯಮಾಡಿದನು ಅದನು II</verse>
				<verse number="17">ಆದರೂ ಪಾಪಮಾಡುತ್ತಲೆ ಬಂದರು ದೇವರಿಗೆದುರಾಗಿ I ಪ್ರತಿಭಟಿಸಿದರು ಅಡವಿಯಲಿ ಪರಾತ್ಪರನಿಗೆ ವಿರುದ್ಧವಾಗಿ II</verse>
				<verse number="18">ಕೋರಿದರು ತಮಗಿಷ್ಟವಾದ ಆಹಾರವನೇ I ಪರೀಕ್ಷಿಸಿದರು ಮನದಲಿ ಆ ದೇವರನೇ II</verse>
				<verse number="19">ಜರೆವ ಮಾತಿನಲಿ ಆಡಿಕೊಂಡರಿಂತು: I “ಅಡವಿಯಲ್ಲಿ ದೇವನೂಟ ಬಡಿಸುವನೆಂತು?” II</verse>
				<verse number="20">“ಹೊಡೆದನು ಆಸರೆಯನು, ಚಿಮ್ಮಿತು ನೀರು, ಹರಿಯಿತು ನೆರೆಯು I ಆದರೆ ಕೊಡಬಲ್ಲನೆ ರೊಟ್ಟಿ, ಒದಗಿಸುವನೆ ಮಾಂಸವನು?” II</verse>
				<verse number="21">ಇದನ್ನು ಕೇಳಿ ಸಿಡಿದೆದ್ದನು ಪ್ರಭು ರೋಷದಿಂದಲೆ I ಉಕ್ಕೇರಿತಾತನ ಕೋಪ ಇಸ್ರಯೇಲರ ಮೇಲೆ I ಕಾರಿದನು ಕೋಪಾಗ್ನಿಯನು ಯಕೋಬಕುಲದ ಮೇಲೆ II</verse>
				<verse number="22">ಏಕೆನೆ, ಅವರಿಗಿರಲಿಲ್ಲ ವಿಶ್ವಾಸ ದೇವರಲಿ I ಇರಲಿಲ್ಲ ನಂಬಿಕೆ ಆತನಾ ಸಲಹುವ ಶಕ್ತಿಯಲಿ II</verse>
				<verse number="23">ಆದರು ಮೇಘಮಂಡಲಕೆ ಆಜ್ಞೆಯಿತ್ತನಾತ I ಅಂತರಿಕ್ಷದಾ ದ್ವಾರಗಳನು ತೆರೆದನಾತ II</verse>
				<verse number="24">ಸುರಿಸಿದನು ಅವರ ಮೇಲೆ ಉಣಲು ಅನ್ನವನು I ಅನುಗ್ರಹಿಸಿದನು ಸ್ವರ್ಗದ ದವಸಧಾನ್ಯವನು II</verse>
				<verse number="25">ನರರಿಗುಣಲುಕೊಟ್ಟನು ದೇವದೂತರ ಆಹಾರವನು I ಇತ್ತನವರಿಗೆ ತೃಪ್ತಿಕರವಾದ ಭೂರಿ ಔತಣವನು II</verse>
				<verse number="26">ಆಕಾಶದಲೆಬ್ಬಿಸಿದನು ಮೂಡಣ ಗಾಳಿಯನು I ಒಲುಮೆಯಿಂದ ಹೊರಡಿಸಿದನು ತೆಂಕಣ ಗಾಳಿಯನು II</verse>
				<verse number="27">ಧೂಳಿನಷ್ಟು ಸುರಿಸಿದನು ಮಾಂಸವೃಷ್ಟಿಯನು I ಸಮುದ್ರದ ಮರಳಿನಷ್ಟು ರೆಕ್ಕೆ ಹಕ್ಕಿಗಳನು II</verse>
				<verse number="28">ಬೀಳ್ವಂತೆ ಮಾಡಿದನು ಪಾಳೆಯದ ಮಧ್ಯದಲೂ I ಉದುರಿದವು ಅವರಿದ್ದ ಗುಡಾರಗಳ ಸುತ್ತಲೂ II</verse>
				<verse number="29">ಸಿಕ್ಕಿತು ಅವರಿಗೆ ತಾವು ಬಯಸಿದ್ದು I ತೃಪ್ತರಾದರು ಹೊಟ್ಟೆತುಂಬ ತಿಂದು II</verse>
				<verse number="30">ಆದರೆ ಆ ಜನಕೆ ಆಶೆ ಕೈಗೂಡುವುದಕೆ ಮುನ್ನ I ಬಾಯಿಗೆ ಬಂದ ತುತ್ತು ಹೊಟ್ಟೆಗಿಳಿಯುವುದಕ್ಕೆ ಮುನ್ನ II</verse>
				<verse number="31">ದೈವಕೋಪವೆದ್ದಿತು ಅವರಿಗೆ ವಿರುದ್ಧ I ಮಾಡಿತವರಲಿ ಕೊಬ್ಬಿದವರ ವಧ I ನೆಲಕುರುಳಿತು ಇಸ್ರಯೇಲ ಸಿರಿಜನ II</verse>
				<verse number="32">ಇಷ್ಟಾದರೂ ಪಾಪಮಾಡುತ ಬಂದವರು ಪದೇ ಪದೇ I ದೇವರ ಅದ್ಭುತಕಾರ್ಯಗಳನು ತೊರೆದರು ನಂಬದೆ II</verse>
				<verse number="33">ಆರಿಸಿದನು ಊದಿ ಅವರ ಬಾಳ ಹಣತೆಯನು I ಬರಮಾಡಿದನು ಅವರಿಗೆ ಭೀಕರ ಮರಣವನು II</verse>
				<verse number="34">ಆತನನು ನೆನಸಿಕೊಂಡರವರು ವಧೆಯಾಗುವಾಗ I ಪರಿತಾಪಗೊಂಡು ದೇವರಿಗೆ ಅಭಿಮುಖರಾದಾಗ II</verse>
				<verse number="35">ನೆನೆದರಾಗ ದೇವರೇ ತಮಗಾಶ್ರಯ ದುರ್ಗವೆಂದು I ಆ ಪರಾತ್ಪರ ದೇವರೇ ತಮಗೆ ಉದ್ಧಾರಕನೆಂದು II</verse>
				<verse number="36">ಆದರೆ ಅವರ ನಾಲಿಗೆಯಾಡಿತು ಅಸತ್ಯ I ಅವರ ಬಾಯಿ ಮಾಡಿತು ಕೇವಲ ಮುಖಸ್ತುತಿಯ II</verse>
				<verse number="37">ನೆಲೆಯಾಗಿರಲಿಲ್ಲ ಅವರ ಹೃದಯ ಆತನಲಿ I ಬದ್ಧರಾಗಿರಲಿಲ್ಲ ಆತನ ನಿಬಂಧನೆಗಳಲಿ II</verse>
				<verse number="38">ಆದರೂ ಕ್ಷಮಿಸಿದನವರನು ಆ ದಯಾಳು, ನಾಶಮಾಡದೆ I ಕೋಪವ ತಾಳಿಕೊಂಡನು ಹಲವು ವೇಳೆ, ಉದ್ರೇಕಗೊಳ್ಳದೆ II</verse>
				<verse number="39">ನೆನೆದುಕೊಂಡನಾತ ಅವರು ಕೇವಲ ನರರೆಂದು I ತಿಳಿದುಕೊಂಡನು ಮರಳಿಬಾರದ ಉಸಿರವರೆಂದು II</verse>
				<verse number="40">ಎಷ್ಟೋ ಸಾರಿ ಅವಿಧೇಯರಾಗಿ ನಡೆದುಕೊಂಡರು ಅರಣ್ಯದಲಿ I ಎಷ್ಟೋ ಸಾರಿ ಆತನ ಮನನೋಯಿಸಿದರು ಮರುಭೂಮಿಯಲಿ II</verse>
				<verse number="41">ಪದೇಪದೇ ಪರೀಕ್ಷಿಸಿದರು ದೇವರನು I ಕೆಣಕಿದರು ಇಸ್ರಯೇಲರ ಸದಮಲನನು II</verse>
				<verse number="42">ಮರೆತೇಬಿಟ್ಟರು ಆತನ ಭುಜಬಲವನು I ವೈರಿಗಳಿಂದ ಬಿಡುಗಡೆಯಾದಾ ಸಮಯವನು II</verse>
				<verse number="43">ಕಡೆಗಣಿಸಿದರು ಈಜಿಪ್ಟಿನಲಿ ಮಾಡಿದ ಪವಾಡಗಳನು I ಸೋನ್ ಬಯಲು ಸೀಮೆಯಲಾತ ಮಾಡಿದ ಮಹತ್ಕಾರ್ಯಗಳನು II</verse>
				<verse number="44">ಅಲ್ಲಿ ಆತ ರಕ್ತವಾಗಿಸಿದನು ನದಿನೀರನು I ಕುಡಿಯಲಾಗದಂತೆ ಮಾಡಿದನಾ ತೊರೆನೀರನು II</verse>
				<verse number="45">ಕಳುಹಿಸಿದನು ವಿನಾಶಕರ ಹುಳುಗಳನು I ಹಾಳುಮಾಡುವ ವಿಷಮಂಡೂಕಗಳನು II</verse>
				<verse number="46">ಬಿಟ್ಟನು ಬೆಳೆಗಳನು ಚಿಟ್ಟೆಗಳಿಗೆ I ಕಷ್ಟದ ಫಲಗಳನು ಮಿಡತೆಗಳಿಗೆ II</verse>
				<verse number="47">ದ್ರಾಕ್ಷಾಲತೆಗಳನು ಹಾಳುಮಾಡಿದನು ಆಲಿಕಲ್ಲಿನಿಂದ I ಅವರ ಅತ್ತಿಮರಗಳನು ನಾಶಮಾಡಿದನು ಕಲ್ಮಳೆಯಿಂದ II</verse>
				<verse number="48">ಅವರ ದನಕರುಗಳನೊಪ್ಪಿಸಿದ ಕಲ್ಮಳೆಗೆ I ಅವರ ಕುರಿಮಂದೆಗಳನೊಪ್ಪಿಸಿದ ಸಿಡಿಲಿಗೆ II</verse>
				<verse number="49">ಸುರಿಸಿದನು ಕೋಪರೌದ್ರಗಳನು, ಉಗ್ರಹಿಂಸೆಗಳನು I ಕಳಿಸಿದನವರ ಮೇಲೆ ಸಂಹಾರಕ ದೂತಗಣಗಳನು II</verse>
				<verse number="50">ತೂಬೆತ್ತಿಬಿಟ್ಟನು ತನ್ನ ಕ್ರೋಧಕೆ I ತುತ್ತಾಗಿಸಿದನು ದೇಹಗಳನು ಜಾಡ್ಯಕೆ I ಅಡ್ಡಿತರಲಿಲ್ಲ ಆತನು ಅವರ ಮರಣಕೆ II</verse>
				<verse number="51">ಸಂಹರಿಸಿದನು ಈಜಿಪ್ಟಿನ ಚೊಚ್ಚಲ ಮಕ್ಕಳನು I ಹಾಮನ ಮನೆತನದ ಮೊತ್ತಮೊದಲ ಸಂತಾನವನು II</verse>
				<verse number="52">ತನ್ನ ಜನರನ್ನೋ ಹೊರತಂದನು ಕುರಿಮಂದೆಯಂತೆ I ಅಡವಿಯೊಳು ಪರಿಪಾಲಿಸಿದನು ಕುರಿಗಾಹಿಯಂತೆ II</verse>
				<verse number="53">ಅವರು ಅಂಜದಂತೆ ನಡೆಸಿದನು ಸುರಕ್ಷಿತವಾಗಿ I ಶತ್ರುಗಳನೋ ಆವರಿಸಿತು ಸಮುದ್ರವು ನುಂಗಿ II</verse>
				<verse number="54">ಕರೆತಂದನವರನು ತನ್ನ ಪವಿತ್ರನಾಡಿಗೆ I ಭುಜಬಲದಿಂದ ಗಳಿಸಿದಾಪರ್ವತ ಸೀಮೆಗೆ II</verse>
				<verse number="55">ಓಡಿಸಿದನು ಅವರಿಗೆದುರಾಗಿದ್ದ ಜನಾಂಗಗಳನು I ಸೊತ್ತಾಗಿ ಹಂಚಿದನು ಇಸ್ರಯೇಲರಿಗಾ ನಾಡನು I ನೆಲೆಗೊಳಿಸಿದನಾ ಜನಾಂಗದ ಬಿಡಾರದಲಿ ಇವರನು II</verse>
				<verse number="56">ಆದರೂ ಬಂಡೆದ್ದು ಪರೀಕ್ಷಿಸಿದರು ಪರಾತ್ಪರ ದೇವರನು I ಕೈಗೊಂಡು ನಡೆಯದೆ ಹೋದರು ಆತನ ವಿಧಿನಿಯಮಗಳನು II</verse>
				<verse number="57">ನಂಬಿಕೆಗೆಟ್ಟ ದ್ರೋಹಿಗಳಾದರು ತಮ್ಮ ಹಿರಿಯರಂತೆ I ಆತನಿಗೆ ಎದುರುಬಿದ್ದರು ಹಿಮ್ಮುಖವಾದ ಬಿಲ್ಲಿನಂತೆ II</verse>
				<verse number="58">ಬೇಸರಗೊಳಿಸಿದರು ತಮ್ಮ ಪೂಜಾಸ್ಥಾನಗಳಿಂದ I ರೇಗಿಸಿದರಾತನನು ಕೆತ್ತನೆಯ ವಿಗ್ರಹಗಳಿಂದ II</verse>
				<verse number="59">ರಣರೌದ್ರನಾದನು ಇದನರಿತ ದೇವನು I ತೊರೆದನು ಅಸಹ್ಯದಿಂದ ಇಸ್ರಯೇಲರನು II</verse>
				<verse number="60">ತ್ಯಜಿಸಿದನು ಸಿಲೋವಿನಲಿ ತನಗಿದ್ದ ಆಲಯವನು I ಜನರ ಮಧ್ಯೆ ವಾಸಿಸಲು ತನಗಿದ್ದಾ ಗುಡಾರವನು II</verse>
				<verse number="61">ಒಪ್ಪಿಸಿದನು ತನ್ನ ಬಲುಮೆಯನು ಕೈಸೆರೆಗೆ I ತನ್ನ ಮಹಿಮೆಯನು ವಿರೋಧಿಗಳ ಕೈವಶಕೆ II</verse>
				<verse number="62">ಗುರಿಮಾಡಿದನು ತನ್ನ ಪ್ರಜೆಯನು ಖಡ್ಗಕೆ I ಉಗ್ರವಾದನು ತನ್ನ ವಾರಸುದಾರರಿಗೆ II</verse>
				<verse number="63">ಆಹುತಿಯಾದರವರ ಯುವಜನ ಅಗ್ನಿಗೆ I ವಿವಾಹವಾಗಲಿಲ್ಲ ಅವರ ಕನ್ಯೆಯರಿಗೆ II</verse>
				<verse number="64">ಬಲಿಯಾದರವರ ಯಾಜಕರು ಶತ್ರುಕತ್ತಿಗೆ I ವಿಧವೆಯರು ರೋದಿಸಲಿಲ್ಲ ಅವರ ಸಾವಿಗೆ II</verse>
				<verse number="65">ಪ್ರಭುವೆದ್ದನು ನಿದ್ರೆಯಿಂದಲೋ ಎಂಬಂತೆ I ಮಧುವಿನ ಅಮಲಿನಿಂದೆಚ್ಚೆತ್ತ ಬಲಿಷ್ಠನಂತೆ II</verse>
				<verse number="66">ಸದೆಬಡಿದನಾತ ತನ್ನ ಶತ್ರುಗಳನು I ನಿತ್ಯನಿಂದೆಗೆ ಈಡುಮಾಡಿದನವರನು II</verse>
				<verse number="67">ವರ್ಜಿಸಿದನು ಜೋಸೆಫ್ ಕುಲದ ಗುಡಾರವನು I ತ್ಯಜಿಸಿದನು ಎಫ್ರಯಿಮ್ ಕುಲದಾ ಗುಡಾರವನು II</verse>
				<verse number="68">ಆರಿಸಿಕೊಂಡನು ಯೆಹೂದರ ಗೋತ್ರವನು I ತನಗತಿಪ್ರಿಯವಾದ ಸಿಯೋನ್ ಗಿರಿಯನು II</verse>
				<verse number="69">ನಿರ್ಮಿಸಿದನು ತನ್ನ ಮಂದಿರವನು ಪರ್ವತದಂತೆ I ಶಾಶ್ವತವಾಗಿ ತಾನು ಸ್ಥಾಪಿಸಿದ ಭೂಮಿಯಂತೆ II</verse>
				<verse number="70">ಆರಿಸಿಕೊಂಡನು ದಾಸ ದಾವೀದನನು I ತೆಗೆದುಕೊಂಡನು ಕುರಿಹಟ್ಟಿಯಿಂದವನನು II</verse>
				<verse number="71">ಕುರಿಮೇಯಿಸುವಾ ಕಸಬಿನಿಂದವನನು ಬಿಡಿಸಿದನು I ಸ್ವಪ್ರಜೆ ಯಕೋಬ್ಯರನು, ಸ್ವಜನ ಇಸ್ರಯೇಲರನು I ಪರಿಪಾಲಿಸುವಂತೆ ನೇಮಕ ಮಾಡಿದನು ಆತನನು II</verse>
				<verse number="72">ದಾವೀದನು ಪೋಷಿಸಿದನವರನು ನೇರ ಮನದಿಂದ I ಪರಿಪಾಲಿಸಿದನವರನು ರಾಜ್ಯಾಧಿಕಾರ ಕುಶಲತೆಯಿಂದ II</verse>
			</chapter>
			<chapter number="79">
				<verse number="1">ಹೊಕ್ಕಿದರು ದೇವಾ, ಮ್ಲೇಚ್ಛರು ನಿನ್ನ ಸ್ವಂತನಾಡನು I ಹೊಲೆ ಮಾಡಿಹರು ನಿನ್ನ ಪವಿತ್ರ ದೇವಾಲಯವನುI ಹಾಳುದಿಬ್ಬವನ್ನಾಗಿಸಿಹರು ಜೆರುಸಲೇಮ್ ನಗರವನು II</verse>
				<verse number="2">ಅರ್ಪಿಸಿದರು ನಿನ್ನ ದಾಸರಾ ಶವಗಳನು ಗಗನ ಪಕ್ಷಿಗಳಿಗೆ I ಹಾಕಿದರು ನಿನ್ನ ಭಕ್ತರ ಮಾಂಸವನು ಕಾಡುಮೃಗಗಳಿಗೆ II</verse>
				<verse number="3">ನೀರಂತೆ ಚೆಲ್ಲಿ ಹರಾ ನೆತ್ತರನು ಜೆರುಸಲೇಮ್ ಸುತ್ತಲು I ನಮ್ಮವರ ಶವಗಳನು ಹೂಳಲು ಯಾರೂ ಇಲ್ಲದಿರಲು II</verse>
				<verse number="4">ನಿಂದಾಸ್ಪದರಾದೆವು ನೆರೆಹೊರೆಯ ಜನಾಂಗಗಳಿಗೆ I ಗುರಿಯಾದೆವು ಸುತ್ತಣವರ ಹಾಸ್ಯಕುಚೋದ್ಯಗಳಿಗೆ II</verse>
				<verse number="5">ನಿನ್ನ ಕೋಪತಾಪ ಹೇ ಪ್ರಭೂ, ಇನ್ನೆಷ್ಟರವರೆಗೆ? I ಉರಿಯುತ್ತಿರಬೇಕೆ ಸದಾ ನಿನ್ನ ರೋಷಾಗ್ನಿಯ ಧಗೆ? II</verse>
				<verse number="6">ಸುರಿ ರೌದ್ರವನು ನಿನ್ನನರಿಯದಾ ಮ್ಲೇಚ್ಛರ ಮೇಲೆ I ನಿನ್ನ ಶ್ರೀನಾಮವನು ಉಚ್ಚರಿಸದಾ ರಾಜ್ಯಗಳ ಮೇಲೆ II</verse>
				<verse number="7">ನುಂಗಿಬಿಟ್ಟರಾ ಜನರು ಯಕೋಬ ವಂಶದವರನು I ಹಾಳುಮಾಡಿ ಬಿಟ್ಟರವರ ನಿವಾಸ ಸ್ಥಳಗಳನು II</verse>
				<verse number="8">ಹೊರಿಸಬೇಡ ಪೂರ್ವಿಕರ ತಪ್ಪುಗಳನು ನಮ್ಮ ಮೇಲೆ I ಉರಿಸಂಕಟದಲ್ಲಿರುವೆವು, ತೋರೆಮಗೆ ಕರುಣೆಯನೀಗಲೆ II</verse>
				<verse number="9">ದೇವಾ, ಮುಕ್ತಿದಾತ, ನೆರವಾಗು ನಿನ್ನ ನಾಮಮಹಿಮೆಯ ನಿಮಿತ್ತ I ಪಾಪಗಳನು ಅಳಿಸಿ ನಮ್ಮನುದ್ಧರಿಸು ನಿನ್ನ ನಾಮದ ಪ್ರಯುಕ್ತ II</verse>
				<verse number="10">“ಅವರ ದೇವರೆಲ್ಲಿ?” ಎಂದು ಮ್ಲೇಚ್ಛರು ಆಡಿಕೊಳ್ಳುವುದೇಕೆ? I ಆಗಲಿ ಪ್ರತೀಕಾರ ನಿನ್ನ ಸೇವಕರ ರಕ್ತ ಸುರಿಸಿದವರಿಗೆ I ಆಗರ್ಥವಾಗುವುದವರಿಗೆ; ಕಾಣಲಿ ಅದು ನಮ್ಮ ಕಣ್ಗಳಿಗೆ II</verse>
				<verse number="11">ಸೆರೆಹೋಗಿರುವವರ ನರಳಾಟಕೆ ಕಿವಿಗೊಡು ನೀನು I ನಿನ್ನ ಶಕ್ತಿ ಕಾದಿಡಲಿ ಸಾವಿಗೀಡಾಗಿರುವ ಅವರನು II</verse>
				<verse number="12">ಪ್ರಭು, ನಿನ್ನನು ನಿಂದಿಸಿದ ಅನ್ಯಜನರ ಮೇಲೆ I ಎರಗಲಿ ಏಳ್ಮಡಿ ದಂಡನೆ ಅವರೆದೆಯ ಮೇಲೆ II</verse>
				<verse number="13">ಆಗ ಸಲ್ಲಿಸುವೆವು ಸದಾಕಾಲ ಕೃತಜ್ಞತೆಯನು ನಿನಗೆ I ಸ್ಮರಿಸುವೆವು ನಿನ್ನ ಮಹಿಮೆಯನು ತಲತಲಾಂತರದವರೆಗೆ I ಹೇ ದೇವಾ, ನಾವು ನಿನ್ನ ಪ್ರಜೆ, ನೀ ಪಾಲಿಸುವ ಮಂದೆ II</verse>
			</chapter>
			<chapter number="80">
				<verse number="1">ಕಿವಿಗೊಟ್ಟು ಆಲಿಸೋ, ಇಸ್ರಯೇಲರ ಮೇಷಪಾಲನೇ I ಜೋಸೆಫನ ವಂಶಜರನು ಕುರಿಹಿಂಡಂತೆ ಕರೆತಂದವನೇ I ವಿರಾಜಿಸು, ಕೆರೂಬಿಯರ ಮಧ್ಯೆ ಆಸೀನನಾದವನೇ II</verse>
				<verse number="2">ಶೋಭಿಸು ಎಫ್ರಯಿಮ್, ಬೆನ್ಯಮಿನ್, ಮನಸ್ಸೆ ಕುಲಗಳ ಮುಂದೆ I ತೋರ್ಪಡಿಸು ನಿನ್ನ ಶೌರ್ಯವನು, ಬಂದು ಜಯಪ್ರದನಾಗು ನಮಗೆ II</verse>
				<verse number="3">ಎಲೈ ದೇವನೇ, ಪುನರುದ್ಧಾರ ಮಾಡೆಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II</verse>
				<verse number="4">ಸ್ವಾಮಿ ದೇವನೇ, ಸರ್ವಶಕ್ತನೆ I ಅದೆನಿತು ಕಾಲ ನೀ ಮುನಿದಿರುವೆ I ನಿನ್ನವರ ಮೊರೆಯನಾಲಿಸದಿರುವೆ? II</verse>
				<verse number="5">ರೋದನವನೆ ಅವರಿಗೆ ಅನ್ನವಾಗಿಸಿದೆ I ಹರಿಯುವ ಕಂಬನಿಯನೆ ಪಾನವಾಗಿಸಿದೆ II</verse>
				<verse number="6">ನೆರೆಯವರಿಗೆ ನಮ್ಮನು ಕಲಹ ಕಾರಣವಾಗಿಸಿದೆ I ಶತ್ರುಗಳ ಅಪಹಾಸ್ಯಕೆ ನಮ್ಮನು ಗುರಿಪಡಿಸಿದೆ II</verse>
				<verse number="7">ಸರ್ವಶಕ್ತನಾದ ದೇವನೆ, ಉದ್ಧರಿಸೆಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II</verse>
				<verse number="8">ಈಜಿಪ್ಟಿನಿಂದ ದ್ರಾಕ್ಷಾಲತೆಯೊಂದನು ನೀ ತಂದೆ I ಅನ್ಯಜನತೆಯನು ಹೊರದೂಡಿ ಅದನು ನಾಟಿಮಾಡಿದೆ II</verse>
				<verse number="9">ಹದಮಾಡಿದೆ ಅದಕೆ ಬೇಕಾದ ನೆಲವನ್ನೆಲ್ಲಾ I ಬೇರೂರಿ ಹಬ್ಬಿಕೊಂಡಿತದು ನಾಡಿನಲ್ಲೆಲ್ಲಾ II</verse>
				<verse number="10">ಬೆಟ್ಟಗುಡ್ಡಗಳನಿದೋ ಕವಿದಿದೆ ಅದರ ಕುಡಿಗಳು I ದೇವದಾರು ಮರಗಳ ಮೇಲೆ ಹಬ್ಬಿವೆ ಬಳ್ಳಿಗಳು II</verse>
				<verse number="11">ಹರಡಿವೆ ಅದರ ಕೊಂಬೆಗಳು ಸಮುದ್ರದವರೆಗೆ I ಬೆಳೆದಿವೆ ಆ ರೆಂಬೆಗಳು ಮಹಾನದಿಯವರೆಗೆ II</verse>
				<verse number="12">ಕಿತ್ತುಹಾಕಿದೆಯೇಕೆ ಅದರ ಬೇಲಿಯನು? I ತರಿದುಬಿಡುವವರಲ್ಲವೆ ದಾರಿಗರು ಅದನು? II</verse>
				<verse number="13">ನಾಶಮಾಡುವುವು ಅದನು ಕಾಡುಹಂದಿಗಳು I ತಿಂದುಹಾಕುವುವು ಅದನು ಅರಣ್ಯಮೃಗಗಳು II</verse>
				<verse number="14">ಸರ್ವಶಕ್ತನಾದ ದೇವರೇ, ಮರಳಿ ಮುಖತೋರಿಸು I ಪರದಿಂದೀಕ್ಷಿಸಿ ಆ ದ್ರಾಕ್ಷಾಲತೆಯನು ಪರಾಮರಿಸು II</verse>
				<verse number="15">ಕಾಪಾಡು ನಿನ್ನ ಬಲಗೈ ನೆಟ್ಟು ಸಾಕಿದ ಸಸಿಯನು I ಕಾದಿರಿಸು ನಿನಗೆಂದೇ ನೀ ಬೆಳೆಸಿದಾ ಬಳ್ಳಿಯನು II</verse>
				<verse number="16">ಅದನು ಬೆರಣಿಯಂತೆ ಸುಟ್ಟುಹಾಕಿದವರಾದರೋ I ನಿನ್ನ ಕೋಪದೃಷ್ಟಿಯಿಂದಲೆ ನಾಶವಾಗುವರು II</verse>
				<verse number="17">ಕೈ ಹಿಡಿದು ಕಾಪಾಡು ನಿನ್ನ ಬಲಗೈ ಉದ್ಧರಿಸಿದ ಪುರುಷನನು I ನಿನಗೆಂದೇ ನೀ ಸಾಕಿ ಬೆಳೆಸಿದಾ ವರಪುತ್ರನನು II</verse>
				<verse number="18">ಆಗ ಬಿಟ್ಟಗಲುವುದಿಲ್ಲ ನಾವೆಂದೆಂದಿಗು ನಿನ್ನನು I ಪುನರ್ಜೀವಗೊಳಿಸು, ಮಾಳ್ಪೆವು ನಿನ್ನ ನಾಮಸ್ಮರಣೆಯನು II</verse>
				<verse number="19">ಸರ್ವಶಕ್ತನಾದ ದೇವನೆ, ಉದ್ಧರಿಸು ನಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II</verse>
			</chapter>
			<chapter number="81">
				<verse number="1">ಹಾಡಿರಿ ಶುಭಗೀತೆಯನು ಬಲಪ್ರದನಾದ ದೇವನಿಗೆ I ಮಾಡಿರಿ ಜಯಜಯಕಾರವನು ಯಕೋಬ ಕುಲದೇವನಿಗೆ II</verse>
				<verse number="2">ಆರಂಭಿಸಿ ಸಂಗೀತವನು, ಬಾರಿಸಿ ಮೃದಂಗವನು I ನುಡಿಸಿರಿ ಮಧುರ ವೀಣೆಯನು, ಸ್ವರಮಂಡಲವನು II</verse>
				<verse number="3">ಊದಿರಿ ಕೊಂಬನು ಅಮವಾಸ್ಯೆಯಲಿ I ಉತ್ಸವದಿನವಾದ ಪೂರ್ಣಿಮೆಯಲಿ II</verse>
				<verse number="4">ದೇವರಿತ್ತ ನಿಯಮವದು ಯಕೋಬ್ಯರಿಗೆ I ಕೊಟ್ಟಕಟ್ಟಳೆಯದು ಇಸ್ರಯೇಲರಿಗೆ II</verse>
				<verse number="5">ಈಜಿಪ್ಟರಿಗೆದುರಾಗಿ ತೆರಳಿದಂದು I ಜೋಸೆಪ್ಯರಿಗಾತ ವಿಧಿಸಿದಾಜ್ಞೆಯದು II</verse>
				<verse number="6">ಅಪರಿಚಿತ ವಾಣಿಯೊಂದು ನುಡಿಯಿತೀ ಮಾತನು: I “ತಪ್ಪಿಸಿದೆ ನಾನು ಹೆಗಲಮೇಲೆ ನೀ ಹೊರೆಹೊರುವುದನು I ಬಿಡುಗಡೆ ಮಾಡಿದೆ ಗೂಡೆಯೆತ್ತುವ ಕೈಗಳನು II</verse>
				<verse number="7">“ಸಂಕಟದಲಿ ಮೊರೆಯಿಟ್ಟಾಗ ವಿಮೋಚಿಸಿದೆ ನಿನ್ನನು I ಗುಡುಗುವ ಮೇಘದಿಂದ ಕೊಟ್ಟೆ ನಿನಗೆ ಸದುತ್ತರವನು I ಮೆರೀಬಾ ಪ್ರವಾಹಗಳ ಬಳಿ ಪರೀಕ್ಷಿಸಿದೆ ನಿನ್ನನು, II</verse>
				<verse number="8">“ನನ್ನ ಜನರೇ, ಕಿವಿಗೊಡಿ ನನ್ನ ಬುದ್ಧಿಮಾತಿಗೆ I ಹಾಗೆ ಮಾಡಿದರೆ ಇಸ್ರಯೇಲರೆ, ಹಿತ ನಿಮಗೆ, II</verse>
				<verse number="9">“ಇರಬಾರದು ಅನ್ಯದೇವತೆಗಳು ನಿಮ್ಮಲಿ I ಪರದೇವತೆಗಳ ಪೂಜೆ ಕೂಡದು ನಿಮ್ಮಲಿ, II</verse>
				<verse number="10">“ಈಜಿಪ್ಟಿನಿಂದ ನಿಮ್ಮನು ಕರೆತಂದ ಸ್ವಾಮಿ ದೇವನು ನಾನು I ತೆರೆಯಿರಿ ನಿಮ್ಮ ಬಾಯನು, ತುಂಬಿಸಿ ತೃಪ್ತಿಪಡಿಸುವೆ ನಾನದನು II</verse>
				<verse number="11">“ಆದರೆ ಕೇಳಲಿಲ್ಲಾ ಜನತೆ ನನ್ನ ಮಾತುಗಳನು I ತೋರಲಿಲ್ಲ ಇಸ್ರಯೇಲರು ನನಗೆ ವಿಧೇಯತೆಯನು, II</verse>
				<verse number="12">“ಎಂತಲೇ ಕೈಬಿಟ್ಟೆ ಅವರನು ಹಟಮಾರಿಗಳೆಂದು I ತಮಗಿಷ್ಟಬಂದಂತೆಯೆ ನಡೆದುಕೊಳ್ಳಲಿಯೆಂದು, II</verse>
				<verse number="13">“ಒಳಿತಾಗಿರುತ್ತಿತ್ತು ನನ್ನ ಜನರು ನನಗೆ ಕಿವಿಗೊಟ್ಟಿದ್ದರೆ I ಮೇಲಾಗಿರುತ್ತಿತ್ತು ಇಸ್ರಯೇಲರು ನನ್ನ ಹಾದಿ ಹಿಡಿದಿದ್ದರೆ, II</verse>
				<verse number="14">“ಅಡಗಿಸುತ್ತಿದ್ದೆ ಅವರ ಶತ್ರುಗಳನು ಸುಲಭವಾಗಿ I ಸದೆಬಡಿಯುತ್ತಿದ್ದೆ ಅವರ ವೈರಿಗಳನು ಸರಿಯಾಗಿ, II</verse>
				<verse number="15">“ಮುದುರಿಕೊಳ್ಳುತ್ತಿದ್ದರಾ ಎದುರಾಳಿಗಳು ಅವರ ಮುಂದೆ I ಅಳಿಯದೆ ಉಳಿದುಕೊಳ್ಳುತ್ತಿತ್ತು ಅವರಿಗಾದ ದಂಡನೆ ಮುಗಿವಿಲ್ಲದೆ, II</verse>
				<verse number="16">“ನಿಮಗಾದರೋ ಬಡಿಸುತ್ತಿದ್ದೆ ಅತ್ಯುತ್ತಮ ಗೋದಿಯನು I ಉಣಿಸುತ್ತಿದ್ದೆ ನಾ ನಿಮಗೆ ಬೆಟ್ಟದ ಜೇನುತುಪ್ಪವನು” II</verse>
			</chapter>
			<chapter number="82">
				<verse number="1">ಸ್ವರ್ಗಸಭೆಯಲಿ ದೇವ ಅಗ್ರಸ್ಥಾನ ವಹಿಸಿಹನು I ದೇವರುಗಳ ಸಮೂಹದಲಿ ನ್ಯಾಯವಿಚಾರಿಸುತಿಹನು II</verse>
				<verse number="2">“ಎಲ್ಲಿಯತನಕ ನೀಡುವಿರಿ ಅನ್ಯಾಯವಾದ ತೀರ್ಪನು? I ಎಲ್ಲಿಯವರೆಗೆ ತೋರುವಿರಿ ದುಷ್ಟರಿಗೆ ಪಕ್ಷಪಾತವನು? II</verse>
				<verse number="3">ಅಬಲರಿಗೆ, ಅನಾಥರಿಗೆ ದೊರಕಿಸಿರಿ ನ್ಯಾಯವನು I ಕಾದಿರಿಸಿರಿ ದೀನದಲಿತರ ಹಕ್ಕು ಬಾಧ್ಯತೆಯನು II</verse>
				<verse number="4">ಬಿಡುಗಡೆಮಾಡಿರಿ ದೀನ ಬಡಬಗ್ಗರನು I ದುರುಳರ ಕೈಯಿಂದ ರಕ್ಷಿಸಿರಿ ಅವರನು II</verse>
				<verse number="5">ಬುದ್ಧಿಹೀನರು, ಮಂದಮತಿಗಳು, ಕತ್ತಲಲಿ ನಡೆವವರು ನೀವು I ಇದರಿಂದಲೆ ಕದಲುತ್ತಿರುವುವು ಧರೆಯ ಅಸ್ತಿವಾರಗಳು II</verse>
				<verse number="6">‘ನೀವು ದೇವರುಗಳು’, ‘ನೀವೆಲ್ಲರು ಪರಾತ್ಪರನ ಮಕ್ಕಳು’ ನಾನೆಂದೆ I ಆದರೂ ಅಳಿಯುವಿರಿ ಅರಸರಂತೆ, ಸಾಯುವಿರಿ ಬರಿ ಮಾನವರಂತೆ” II</verse>
				<verse number="7"></verse>
				<verse number="8">ಎದ್ದೇಳು ದೇವ, ಸ್ಥಾಪಿಸು ನ್ಯಾಯವನು ಧರೆಯೊಳು I ನಿನ್ನ ಸೊತ್ತಾಗಿವೆಯಲ್ಲವೆ ಸಮಸ್ತ ರಾಷ್ಟ್ರಗಳು II</verse>
			</chapter>
			<chapter number="83">
				<verse number="1">ಮಾತನಾಡದೆ ದೇವಾ, ಸುಮ್ಮನಿರಬೇಡ I ಮೌನದಿಂದ ಸ್ವಾಮೀ, ನಿಶ್ಚಿಂತನಿರಬೇಡ II</verse>
				<verse number="2">ದಂಗೆಯೆದ್ದಿಹರಿದೋ ನಿನ್ನ ಶತ್ರುಗಳು I ತಲೆಯೆತ್ತಿಕೊಂಡಿಹರು ನಿನ್ನ ದ್ವೇಷಿಗಳು II</verse>
				<verse number="3">ಕುತಂತ್ರಮಾಡುತಿಹರು ನಿನ್ನ ಪ್ರಜೆಗೆ ವಿರುದ್ಧ I ಆಲೋಚಿಸುತಿಹರು ನಿನ್ನ ಶರಣರಿಗೆ ವಿರುದ್ಧ II</verse>
				<verse number="4">ಇಂತೆನ್ನುತಿಹರು: “ಬನ್ನಿ ಸಂಹರಿಸೋಣ I ಆತನ ಜನಾಂಗ ಉಳಿಯದಂತೆ ಮಾಡೋಣ I ಇಸ್ರಯೇಲೆಂಬ ನಾಮವನಳಿಸಿಬಿಡೋಣ” II</verse>
				<verse number="5">ಎದೋಮ್ಯರ ಪಾಳೆಯದವರು ಇಷ್ಮಾಯೇಲ್ಯರು, I ಗೇಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, II</verse>
				<verse number="6">ಮೊವಾಬ್ಯ, ಹಗ್ರೀಯ, ಫಿಲಿಷ್ಟಿಯ, ಟೈರ್ ಜನರು I ಒಮ್ಮತದಿಂದಿವರೆಲ್ಲರು ಒಟ್ಟುಗೂಡಿಹರು I ನಿನ್ನ ವಿರುದ್ಧವಾಗಿ ಒಳಸಂಚು ಮಾಡಿಹರು II</verse>
				<verse number="7"></verse>
				<verse number="8">ಇವರೊಡನೆ ಕೂಡಿಕೊಂಡಿಹ ಅಸ್ಸೀರ್ಯರು I ಲೋಟನ ವಂಶಕ್ಕೆ ಭುಜಬಲವಾಗಿಹರು II</verse>
				<verse number="9">ಮಾಡವರಿಗೆ ಪ್ರಭೂ, ನೀ ಮಿದ್ಯಾನ್ಯರಿಗೆ ಮಾಡಿದಂತೆ I ಕಿಷೋನ್ ನದಿಯ ಬಳಿ ಸೀಸೆರ್‍ಯಾಬೀನರಿಗೆ ಮಾಡಿದಂತೆ II</verse>
				<verse number="10">ಎಂದೋರಿನಲ್ಲವರು ಕೊಲೆಯಾದರು I ಹೊಲಗದ್ದೆಗಳಿಗೆ ಗೊಬ್ಬರವಾದರು II</verse>
				<verse number="11">ಒರೆಬ್, ಜೇಬ್ ಎಂಬವರ ಗತಿಯೊದಗಲಿ ಇವರ ಸಿರಿವಂತರಿಗೆ I ಜೇಬಹ, ಚೆಲ್ಮುನ್ನರ ಪಾಡು ಬರಲಿರುವ ಸಕಲ ರಾಜರಿಗೆ I “ಬನ್ನಿ, ದೇವರ ನಾಡುಬೀಡನು ಆಕ್ರಮಿಸೋಣ” ಎಂದವರಿಗೆ II</verse>
				<verse number="12"></verse>
				<verse number="13">ಮಾಡಿವರನು ದೇವಾ, ಗಾಳಿಗೆ ತೂರುವ ಹೊಟ್ಟಿನಂತೆ I ಸುಂಟರಗಾಳಿಯಲಿ ಮೇಲೇಳುವ ದೂಳೀಪಟದಂತೆ II</verse>
				<verse number="14">ಕಾಡುಮೇಡನು ಸುಡುವಾ ಬೆಂಕಿಯಂತೆ I ಪರ್ವತವನೆ ಉರಿಸುವ ಜ್ವಾಲೆಯಂತೆ II</verse>
				<verse number="15">ಓಡಿಸೋಡಿಸವರನು ನೀ ಬೀಸುವ ಬಿರುಗಾಳಿಗೆ I ಗುರಿಪಡಿಸವರನು ನಿನ್ನಾ ಚಂಡಮಾರುತಕೆ II</verse>
				<verse number="16">ಕವಿಯಲಿ ಅವಮಾನ ನಿಂದೆ ಇವರ ಮುಖವನು I ಅರಸುವರಾಗ ಪ್ರಭೂ, ನಿನ್ನ ಸಿರಿನಾಮವನು II</verse>
				<verse number="17">ಕಳವಳಗೊಳ್ಳಲಿ ಅವರು ಸತತವು ಲಜ್ಜೆಯಿಂದ I ಅವರಳಿದುಹೋಗಲಿ ಅವಮಾನ ನಿಂದೆಗಳಿಂದ II</verse>
				<verse number="18">ಇವರು ಅರಿಯಲಿ ಪ್ರಭುವೆಂಬ ನಾಮ ನಿನ್ನದೆಂದು I ಧರೆಯಲ್ಲೆಲ್ಲಾ ಸರ್ವೋನ್ನತ ನೀನೇ ಎಂದು II</verse>
			</chapter>
			<chapter number="84">
				<verse number="1">ಹೇ ಪ್ರಭು, ಸ್ವರ್ಗ ಸೇನಾಧೀಶ್ವರ I ನಿನ್ನ ನಿವಾಸಗಳೆನಿತೋ ಸುಂದರ II</verse>
				<verse number="2">ಹಂಬಲಿಸಿ ಸೊರಗಿಹೋಗಿದೆ ಎನ್ನ ಮನ I ಕಾಣಬೇಕೆಂದು ಪ್ರಭುವಿನ ಪ್ರಾಂಗಣ II</verse>
				<verse number="3">ಸ್ವಾಮಿ ದೇವ, ಎನ್ನರಸ, ಸ್ವರ್ಗಸೇನಾಧೀಶ್ವರ I ದೊರಕಿದೆ ಗುಬ್ಬಿಗೆ ಗೂಡು ನಿನ್ನ ವೇದಿಕೆಯ ಹತ್ತಿರ I ಪಾರಿವಾಳಕ್ಕು ಅಲ್ಲೇ ಇದೆ ಮರಿಯಿಡಲು ಆಗರ II</verse>
				<verse number="4">ನಿನ್ನ ಮಂದಿರದಲಿ ವಾಸಿಸುವವರು ಧನ್ಯರು I ನಿರಂತರವು ನಿನ್ನ ಗುಣಗಾನ ಮಾಡುವರವರು II</verse>
				<verse number="5">ನಿನ್ನಿಂದ ಶಕ್ತಿಪಡೆಯುವವರು ಧನ್ಯರು I ಸಿಯೋನ್ ಶಿಖರಕ್ಕವರು ಪ್ರಿಯ ಯಾತ್ರಿಕರು II</verse>
				<verse number="6">ದಾಟುವಾಗ ಬಾಕಾ ಕಣಿವೆಯನು I ಚಿಲುಮೆಗಳನಾಗಿ ಮಾಡುವರದನು II ಮುಂಗಾರು ಮಳೆಯು ಸುರಿಯಲು I ತುಂಬಿ ತುಳುಕುವುದಾ ಸರಸಿಗಳು II</verse>
				<verse number="7">ಸಾಗುಸಾಗುತ್ತಾ ಬೆಳೆವುದಾ ಯಾತ್ರಿಕರ ಚೇತನ I ಪಡೆವರು ಸಿಯೋನ್ ಗಿರಿಯೊಳು ದೇವಾಧಿದೇವನ ದರ್ಶನ II</verse>
				<verse number="8">ಸ್ವರ್ಗಸೇನಾಧೀಶ್ವರ, ಸ್ವಾಮಿದೇವ ಕಿವಿಗೊಡು ನನ್ನ ಮೊರೆಗೆ I ಯಕೋಬ ಕುಲದೇವಾ, ನನ್ನ ಪ್ರಾರ್ಥನೆ ಬೀಳಲಿ ನಿನ್ನ ಕಿವಿಗೆ II</verse>
				<verse number="9">ನಿನ್ನ ಮಂದಿರದಲಿ ಕಳೆದ ದಿನವೊಂದು I ತಿಳಿವೆನು ಸಾವಿರ ದಿನಕೂ ಮೇಲೆಂದು II</verse>
				<verse number="10">ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು I ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು II</verse>
				<verse number="11">ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II</verse>
				<verse number="12">ಪ್ರಭುವೇ, ಸ್ವರ್ಗಸೇನಾಧೀಶ್ವರನೇ I ನಿನ್ನಲಿ ನಂಬಿಕೆ ಇಡುವವನೇ ಧನ್ಯನು I</verse>
			</chapter>
			<chapter number="85">
				<verse number="1">ಪ್ರಭೂ, ತೋರಿಸಿದೆ ಕರುಣೆ ನಿನ್ನ ನಾಡಿಗೆ I ಮರಳಿಸಿದೆ ಸುಕ್ಷೇಮವನು ಯಕೋಬ್ಯರಿಗೆ II</verse>
				<verse number="2">ಮನ್ನಿಸಿದೆ ನಿನ್ನ ಪ್ರಜೆಯ ದ್ರೋಹವನು I ಕ್ಷಮಿಸಿದೆ ನೀ ಅವರ ಪಾಪಗಳೆಲ್ಲವನು II</verse>
				<verse number="3">ತೊರೆದುಬಿಟ್ಟೆ ಸ್ವಾಮೀ, ನಿನ್ನ ರೋಷವನು I ಆರಿಸಿಬಿಟ್ಟೆ ನಿನ್ನ ಕೋಪಾಗ್ನಿಯನು II</verse>
				<verse number="4">ಪುನಶ್ಚೇತನಗೊಳಿಸೆಮ್ಮನು ದೇವ, ಉದ್ಧಾರಕ I ತೊರೆದುಬಿಡು ನಮ್ಮ ಬಗ್ಗೆ ನಿನಗಿರುವ ಸಿಟ್ಟುಸಿಡುಕ II</verse>
				<verse number="5">ಸದಾಕಾಲಕೂ ನಮ್ಮ ಮೇಲೆ ಸಿಟ್ಟಾಗಿರುವೆಯಾ? ತಲತಲಾಂತರಗಳಿಗೂ ಕೋಪವನು ಬೆಳೆಸುವೆಯಾ?</verse>
				<verse number="6">ನವಜೀವವನು ತುಂಬಿಸಲಾರೆಯಾ ನಮ್ಮಲಿ? I ಆಗ ನಿನ್ನ ಜನರು ಆನಂದಿಸುವರು ನಿನ್ನಲಿ II</verse>
				<verse number="7">ತೋರಿಸೆಮಗೆ ಪ್ರಭು ಕರುಣೆಯನು I ಅನುಗ್ರಹಿಸೆಮಗೆ ರಕ್ಷಣೆಯನು II</verse>
				<verse number="8">ನಾ ಕೇಳುತ್ತಿರುವೆನು, ಪ್ರಭು ಹೇಳುವುದನು I ತನ್ನ ಜನರಿಗಾತ ನುಡಿವುದು ಶಾಂತಿಯನು I ಇನ್ನಾದರು ತೊರೆಯೋಣ ಮೂರ್ಖತೆಯನು II</verse>
				<verse number="9">ಭಯಭಕ್ತಿಯುಳ್ಳವರಿಗಾತನ ರಕ್ಷಣೆ ಸನ್ನಿಹಿತ I ಇದರಿಂದಾತನ ಮಹಿಮೆ ನಾಡಿಲ್ಲಿರುವುದು ನಿರುತ II</verse>
				<verse number="10">ಪ್ರೀತಿಯೂ ಸತ್ಯವೂ ಒಂದನ್ನೊಂದು ಕೂಡಿರುವುವು I ನೀತಿಯೂ ಶಾಂತಿಯೂ ಒಂದನ್ನೊಂದು ಚುಂಬಿಸುವುವು II</verse>
				<verse number="11">ಸತ್ಯತೆಯು ಹುಟ್ಟುವುದು ಭೂಮಿಯಿಂದ I ನೀತಿಯು ದೃಷ್ಟಿಸುವುದು ಗಗನದಿಂದ II</verse>
				<verse number="12">ಪ್ರಭು ಕೊಟ್ಟೇ ತೀರುವನು ಒಳಿತನು I ನಮ್ಮ ನಾಡು ನೀಡುವುದು ಬೆಳೆಯನು II</verse>
				<verse number="13">ನಡೆವುದು ಪ್ರಭುವಿನ ಮುಂದೆ ನೀತಿ I ಮಾಡುವುದು ಆತನ ಹೆಜ್ಜೆಗೆ ಹಾದಿ II</verse>
			</chapter>
			<chapter number="86">
				<verse number="1">ಹೇ ಪ್ರಭು, ನೀಡೆನಗೆ ಸದುತ್ತರವನು I ಕಿವಿಗೊಡು, ದೀನನು, ದಲಿತನು ನಾನು II</verse>
				<verse number="2">ಕಾಪಾಡು ಪ್ರಭು, ನಾ ನಿನ್ನ ಭಕ್ತನು I ಉದ್ಧರಿಸು ನಿನ್ನ ನಂಬಿದ ದಾಸನನು II</verse>
				<verse number="3">ನೀನೆನಗೆ ದೇವನು, ಕರುಣಿಸೆನ್ನನು I ದಿನವೆಲ್ಲ ಪ್ರಭು, ನಿನಗೆ ಮೊರೆಯಿಡುವೆನು II</verse>
				<verse number="4">ನಿನ್ನ ದಾಸನಿಗೆ ನೀಡು ಮನದಾನಂದವನು I ನಿನಗೆ ಅಭಿಮುಖವಾಗಿಸಿರುವೆ ಎನ್ನಾತ್ಮವನು II</verse>
				<verse number="5">ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II</verse>
				<verse number="6">ಕಿವಿಗೊಡು ಪ್ರಭು, ನನ್ನ ಪ್ರಾರ್ಥನೆಗೆ I ನನ್ನ ವಿಜ್ಞಾಪನೆಗಳ ಕೋರಿಕೆಗೆ II</verse>
				<verse number="7">ಸಂಕಟಬಂದಾಗ ನಿನಗೆ ಮೊರೆಯಿಡುವೆ I ಸದುತ್ತರ ಪಾಲಿಸುವೆಯೆಂದು ನಂಬಿರುವೆ II</verse>
				<verse number="8">ದೇವರುಗಳಲಿ ಪ್ರಭು, ನಿನ್ನಂಥವನಿಲ್ಲ I ನಿನ್ನ ಮಹತ್ಕಾರ್ಯಗಳಿಗೆ ಸಾಟಿಯೇ ಇಲ್ಲ II</verse>
				<verse number="9">ಬರುವುವು ನೀನುಂಟುಮಾಡಿದ ಸಕಲ ಜನಾಂಗಗಳು I ನಿನ್ನ ನಾಮವನು ಘನಪಡಿಸಲು, ನಿನಗೆ ಅಡ್ಡಬೀಳಲು II</verse>
				<verse number="10">ಪ್ರಭು, ನೀನೊಬ್ಬನೇ ದೇವನು I ಅದ್ಭುತಶಾಲಿ, ಮಹೋನ್ನತನು II</verse>
				<verse number="11">ನಿನ್ನ ಸತ್ಯಪಥದಲಿ ನಾ ನಡೆವಂತೆ I ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು II ನಿನ್ನ ನಾಮದಲಿ ಭಯಭಕ್ತಿಯಿರುವಂತೆ I ಅನುಗ್ರಹಿಸೆನಗೆ ನೀ ಏಕಾಗ್ರತೆಯನು II</verse>
				<verse number="12">ಮಾಡುವೆ ದೇವಾ, ನಿನ್ನ ಗುಣಗಾನವನು ಶ್ರದ್ಧೆಯಿಂದ I ಘನಪಡಿಸುವೆ ಸ್ವಾಮಿ, ನಿನ್ನ ಶ್ರೀನಾಮವನು ಅನವರತ II</verse>
				<verse number="13">ನೀನೆನಗೆ ತೋರಿಸಿರುವ ಕರುಣೆ ಮಹತ್ತರವಾದುದಯ್ಯಾ I ಪಾತಾಳದಿಂದ ನನ್ನ ಪ್ರಾಣವನು ಉಳಿಸಿದೆಯಯ್ಯಾ II</verse>
				<verse number="14">ಗರ್ವಿಗಳೆದ್ದಿಹರು ದೇವಾ, ನನ್ನ ವಿರುದ್ಧವಾಗಿ I ನನ್ನ ಪ್ರಾಣಕೆ ಕಾದಿಹರು ಕ್ರೂರಿಗಳು ಗುಂಪಾಗಿ I ಕಾಣುತ್ತಿಹರವರು ನಿನ್ನನು ಪ್ರಭು, ಅಲಕ್ಷ್ಯವಾಗಿ II</verse>
				<verse number="15">ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II</verse>
				<verse number="16">ಕಟಾಕ್ಷವಿಟ್ಟು ಕರುಣಿಸೆನ್ನನು I ನೀಡು ನಿನ್ನ ದಾಸನಿಗೆ ಬಲವನು I ರಕ್ಷಿಸು ನಿನ್ನ ದಾಸಿಯ ಮಗನನು II</verse>
				<verse number="17">ನಿನ್ನ ನೆರವು, ಸಾಂತ್ವನ, ನನಗಿದೆಯೆಂದು I ನೀಡೊಂದು ಪ್ರಭು, ಶುಭಸೂಚನೆಯನು I ಅದನೋಡಿ ಶತ್ರು ಪಡಲಿ ಲಜ್ಜೆಯನು II</verse>
			</chapter>
			<chapter number="87">
				<verse number="1">ಪವಿತ್ರ ಪರ್ವತದಲಿ ಕರ್ತನು I ಸ್ಥಾಪಿಸಿಹನು ತನ್ನ ನಗರವನು II</verse>
				<verse number="2">ಯಕೋಬ ವಂಶದ ಸಕಲ ನಿವಾಸಿಗಳಿಗಿಂತ I ಸಿಯೋನ್ ದ್ವಾರಗಳು ಆತನಿಗೆ ಸುಪ್ರೀತ II</verse>
				<verse number="3">ದೈವ ಶ್ರೀನಗರವೇ, ಕೇಳು ಇವನ್ನು I ನಿನ್ನ ಕುರಿತ ಅತಿಶಯೋಕ್ತಿಗಳನು: II</verse>
				<verse number="4">“ನನಗೆ ಮಣಿಯುವ ರಾಷ್ಟ್ರಗಳಲಿ I ಈಜಿಪ್ಟ್, ಬಾಬೆಲ್ ದೇಶಗಳನು ಲೆಕ್ಕಿಸುವೆ II ಜೆರುಸಲೇಮಿನ ನಿವಾಸಿಗಳಲಿ I ಪಿಲಿಷ್ಟಿಯ, ಟೈರ್, ಎಥಿಯೋಪಿಯ ಜನ ಸೇರಿವೆ II</verse>
				<verse number="5">ಸಕಲ ಜನಾಂಗಗಳ ಜನನಿ ಸಿಯೋನ್ ನಗರವೇ I ಅದನು ಸ್ಥಾಪಿಸಿದವ ಪರಾತ್ಪರ ಪ್ರಭುವೇ” II</verse>
				<verse number="6">ಪ್ರಭು ಪಟ್ಟಿಮಾಡುವಾಗ ಸಕಲ ಜಾತಿಜನಾಂಗಗಳನು I ನಿನ್ನ ಜನಾಂಗವೆಂದೇ ಪರಿಗಣಿಸುವನು ಪ್ರತಿಯೊಂದನು II</verse>
				<verse number="7">ಗಾಯಕ ನರ್ತಕರೂ ಹಾಡುವರೀ ಹಾಡ I “ನಮ್ಮೆಲ್ಲರ ಜೀವದೊರೆತೆ ನೀನೇ ನೋಡ” II</verse>
			</chapter>
			<chapter number="88">
				<verse number="1">ಪ್ರಭು, ಜೀವೋದ್ಧಾರಕನೇ ಕೇಳು I ನಿನಗೆ ಮೊರೆಯಿಡುವೆ ಹಗಲಿರುಳು II</verse>
				<verse number="2">ನನ್ನ ಯೋಚನೆ ನಿನ್ನ ಬಳಿಸೇರಲಿ I ನನ್ನ ಕೂಗು ನಿನ್ನ ಕಿವಿಗೆ ಬೀಳಲಿ II</verse>
				<verse number="3">ಸಂಕಟದಿಂದ ತುಂಬಿದೆ ನನ್ನ ಜೀವನ I ಪಾತಾಳವ ಸಮೀಪಿಸಿದೆ ನನ್ನ ಪ್ರಾಣ II</verse>
				<verse number="4">ನಾನಿರುವೆ ಸಮಾಧಿ ಸೇರಲಿರುವವರಂತೆ I ಇರುವೆ ಶಕ್ತಿಯಿಲ್ಲದ ನರಮಾನವರಂತೆ II</verse>
				<verse number="5">ಇರುವೆ ಹತನಾಗಿ ಸಮಾಧಿ ಸೇರಿದವನಂತೆ I ಮೃತರಾದವರೊಳು ನಿರಾಕೃತನಾದವನಂತೆ II ನಿನ್ನಾ ನೆನಕೆಯಿಂದ ಅಳಿದು ಹೋದವನಂತೆ I ನಿನ್ನಾ ಪಾಲನೆಯಿಂದ ದೂರವಾದವನಂತೆ II</verse>
				<verse number="6">ದಬ್ಬಿರುವೆ ನೀನೆನ್ನನು ಅಧೋಲೋಕಕೆ I ಅಗಾಧಸ್ಥಳಕೆ, ಗಾಢ ಅಂಧಕಾರಕೆ II</verse>
				<verse number="7">ನಿನ್ನ ಕಡುಕೋಪ ಎರಗಿಬಿಟ್ಟಿದೆ ನನ್ನ ಮೇಲೆ II ನನ್ನ ಬಾಧಿಸುತ್ತಿವೆ ಅದರ ಕಲ್ಲೋಲ ಮಾಲೆ II</verse>
				<verse number="8">ಆಪ್ತರೂ ಹೇಸಿ ದೂರಸರಿವಂತೆ ಮಾಡಿರುವೆ I ಬಂಧಿತನಾದ ನಾನು ಬಿಡಿಸಿಕೊಳ್ಳಲಾಗದಿರುವೆ II</verse>
				<verse number="9">ಮಬ್ಬಾಗಿ ಹೋಗಿವೆ ಕಣ್ಗಳು ಬಾಧೆಯಿಂದ I ಪ್ರಭೂ, ಕೈಯೊಡ್ಡಿ ಮೊರೆಯಿಡುತ್ತಿರುವೆ ಸದಾ II</verse>
				<verse number="10">ಮೃತರು ನಿನ್ನದ್ಭುತಗಳನು ಮೆಚ್ಚುವುದುಂಟೆ I ಸತ್ತ ಜನರೆದ್ದು ನಿನ್ನ ಸ್ತುತಿಸುವುದುಂಟೆ? II</verse>
				<verse number="11">ಸಾರುವುದುಂಟೆ ಸಮಾಧಿಯಲಿ ನಿನ್ನ ಕೃಪೆಯನು? I ಅಧೋಲೋಕದಲಿ ನಿನ್ನ ಪ್ರಾಮಾಣಿಕತೆಯನು? II</verse>
				<verse number="12">ತಿಳಿವರೆ ನಿನ್ನ ಪವಾಡಗಳನು ಇರುಳ ನಿಶೆಯೊಳು? I ನಿನ್ನ ನ್ಯಾಯ ನೀತಿಯನು ಮರೆವಾ ಲೋಕದೊಳು? II</verse>
				<verse number="13">ನಾನಾದರೋ ಪ್ರಭೂ, ಮೊರೆಯಿಡುವೆ ನಿನಗೆ I ಉದಯದಲೆ ಸೇರುವುದೆನ್ನ ಜಪ ನಿನ್ನ ಸನ್ನಿಧಿಗೆ II</verse>
				<verse number="14">ಪ್ರಭು, ನನ್ನ ತಳ್ಳಿಬಿಟ್ಟೆಯೇಕೆ? I ಮುಖವನು ತಿರುಗಿಸಿಕೊಂಡೆಯೇಕೆ? II</verse>
				<verse number="15">ಬಾಲ್ಯದಿಂದಲು ಬಾಧಿತನು, ಮೃತಪ್ರಾಯನು I ನಿನ್ನ ದಂಡನೆ ಸಹಿಸಿ ಸೊರಗಿದವನು ನಾನು II</verse>
				<verse number="16">ನನ್ನನು ಆವರಿಸಿಕೊಂಡಿದೆ ನಿನ್ನ ಕಡುಕೋಪಾಗ್ನಿಯು I ನನ್ನ ಹಾಳುಮಾಡುತ್ತಿದೆ ನಿನ್ನ ಭಯಂಕರ ದಾಳಿಯು II</verse>
				<verse number="17">ದಿನವೆಲ್ಲಾ ನನ್ನನು ಅವು ಸುತ್ತುಗಟ್ಟಿವೆ I ಪ್ರವಾಹದಂತೆ ಎನ್ನ ಮೇಲೆ ಹರಿಯುತ್ತಿವೆ II</verse>
				<verse number="18">ಬಂಧುಮಿತ್ರರನು ನನ್ನಿಂದ ದೂರ ಮಾಡಿರುವೆ I ಅಂಧಕಾರದೊಡನೆ ಸಂಗಾತಿಯನ್ನಾಗಿಸಿರುವೆ II</verse>
			</chapter>
			<chapter number="89">
				<verse number="1">ಪ್ರಭು, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು I ಸಾರುವೆನು ತಲತಲಾಂತರಕು ನಿನ್ನ ಸತ್ಯತೆಯನು II</verse>
				<verse number="2">ನಿನ್ನಚಲ ಪ್ರೀತಿ ಪ್ರಭು, ನನಗೆ ಶಾಶ್ವತ ಸಿದ್ಧ I ನಿನ್ನ ಸತ್ಯತೆ ಆಗಸದಂತೆ ಸ್ಥಿರ ಸ್ಥಾಪಿತ II</verse>
				<verse number="3">ನೀನೆಂದೆ, “ನಾನಾರಿಸಿದವನೊಡನೆ ಮಾಡಿರುವೆ ಒಪ್ಪಂದ I ನನ್ನ ದಾಸ ದಾವೀದನಿಗಿತ್ತಿರುವೆ ಈ ತೆರವಾದ ಶಪಥ: II</verse>
				<verse number="4">“ಸ್ಥಾಪಿಸುವೆ ಶಾಶ್ವತವಾಗಿ ನಿನ್ನ ಸಂತತಿಯನು I ಸ್ಥಿರಪಡಿಸುವೆ ಯುಗಯುಗಕು ನಿನ್ನ ಸಿಂಹಾಸನವನು” II</verse>
				<verse number="5">ಪ್ರಸಿದ್ಧಪಡಿಸುವುದು ಪ್ರಭು, ಗಗನವು ನಿನ್ನ ಮಹತ್ತನು I ಸಂಕೀರ್ತಿಸುವುದು ಸ್ವರ್ಗೀಯ ಸಭೆ, ನಿನ್ನ ಸತ್ಯತೆಯನು II</verse>
				<verse number="6">ಮೇಘಮಂಡಲದಲಿ ಸಮಾನನಾರು ಪ್ರಭುವಿಗೆ I ದೇವದೂತರೊಳು ಹೋಲಿಕೆ ಯಾವುದು ಆತನಿಗೆ II</verse>
				<verse number="7">ಸ್ವರ್ಗೀಯ ಸಭೆಯಲಿ ಪ್ರತಿಭಾವಂತನು ದೇವನು II ಸುತ್ತಣದೆಲ್ಲ ಪರಿವಾರಕ್ಕಿಂತ ಬಹು ಭೀಕರನು II</verse>
				<verse number="8">ಪ್ರಭೂ, ಶಕ್ತಿಸ್ವರೂಪ, ನಿನ್ನ ಸುತ್ತುವರೆದಿದೆ ಸತ್ಯತೆ I ಸ್ವಾಮಿದೇವಾ, ಸರ್ವೇಶ್ವರಾ, ನಿನಗೆಲ್ಲಿಯದು ಸಮಾನತೆ? II</verse>
				<verse number="9">ಕಡಲ ಕಲ್ಲೋಲಗಳನ್ನೆಲ್ಲ ಅಂಕೆಯಲಿ ಇಡುವವನು ನೀನು I ತರಂಗವೇಳುವಾಗಲು ಕೂಡ ತಡೆಹಿಡಿವವನು ನೀನು II</verse>
				<verse number="10">ಚದರಿಸಿದೆ ನಿನ್ನ ಭುಜಬಲದಿಂದ ಶತ್ರುಗಳನು I ಛೇದಿಸಿ ಕೊಂದುಹಾಕಿದೆ ಆ ರಾಕ್ಷಸ ರಹಬನನು II</verse>
				<verse number="11">ಆಕಾಶವು ನಿನ್ನದು ಪ್ರಭು, ಭೂಮಿಯೂ ನಿನ್ನದೇ I ಜಗವು, ಅದರಲ್ಲಿರುವುದೆಲ್ಲವು, ನಿನ್ನಿಂದಾದುದೇ II</verse>
				<verse number="12">ಉತ್ತರ ದಕ್ಷಿಣಗಳನುಂಟು ಮಾಡಿದವನು ನೀನು I ಸ್ತುತಿಸುತ್ತವೆ ತಾಬೋರ್ ಹೆರ್‍ಮೊನ್ ನಿನ್ನ ನಾಮವನು II</verse>
				<verse number="13">ನಿನ್ನ ಹಸ್ತ ಶಕ್ತಿಯುತ, ಬಲಗೈ ಮಹೋನ್ನತ I ನಿನ್ನ ಭುಜಬಲವಾದರೊ ಪರಾಕ್ರಮರೂಪಿತ II</verse>
				<verse number="14">ನೀತಿನ್ಯಾಯ ನಿನ್ನ ಸಿಂಹಾಸನದಸ್ತಿವಾರ I ಪ್ರೀತಿಸತ್ಯತೆ ನಿನ್ನ ಸಾನ್ನಿಧ್ಯ ಪರಿವಾರ II</verse>
				<verse number="15">ಧನ್ಯರು ಪ್ರಭು, ನಿನಗೆ ಜಯಕಾರ ಹಾಡುವವರು I ನಿನ್ನ ಮುಖದ ಪ್ರಕಾಶದೊಳವರು ನಡೆಯುವರು II</verse>
				<verse number="16">ಆನಂದಿಸುವರವರು ಸದಾ ನಿನ್ನ ನಾಮದಲಿ I ಪ್ರವರ್ಧಿಸುವರವರು ನಿನ್ನ ನ್ಯಾಯನೀತಿಯಲಿ II</verse>
				<verse number="17">ಅವರ ಶಕ್ತಿಸಾಮರ್ಥ್ಯದ ಪ್ರತಿಭೆ ನಿನ್ನದೆ I ನಿನ್ನ ದಯೆಯಿಂದ ನಮಗೆ ಕೋಡುಮೂಡಿದೆ II</verse>
				<verse number="18">ಗುರಾಣಿಯಂತಿಹ ನಮ್ಮ ರಾಜನು ಪ್ರಭುವಿನವನೇ I ಇಸ್ರಯೇಲಿನ ಪರಮಪಾವನ ಸ್ವಾಮಿಗೆ ಸೇರಿದವನೇ II</verse>
				<verse number="19">ಹಿಂದೊಮ್ಮೆ ನೀ ದರ್ಶನವಿತ್ತು ಇಂತೆಂದೆ ನಿನ್ನ ಭಕ್ತರಿಗೆ: I “ರಕ್ಷಾಬಲವನು ಅನುಗ್ರಹಿಸಿರುವೆ ಶೂರವೀರನೋರ್ವನಿಗೆ I ಪ್ರಜೆಗಳಲೊರ್ವ ಯುವಕನನು ಏರಿಸಿರುವೆ ಉನ್ನತಸ್ಥಾನಕೆ II</verse>
				<verse number="20">“ನನ್ನ ದಾಸ ದಾವೀದನನು ಗುರುತಿಸಿರುವೆ I ಪವಿತ್ರ ತೈಲದಿಂದವನನು ಅಭಿಷೇಕಿಸಿರುವೆ II</verse>
				<verse number="21">ನನ್ನ ಕೈಯ ಆಸರೆ ಅವನಿಗಿದೆ ಸತತ I ನನ್ನ ಭುಜಬಲವು ಅವನಿಗೆ ಶಕ್ತಿಯುತ II</verse>
				<verse number="22">ಸಿಗನು ಶತ್ರುವಿನ ಕುತಂತ್ರಕೆ I ಕುಗ್ಗನು ಕೆಡುಕರಾ ದರ್ಪಕೆ II</verse>
				<verse number="23">ಅವನ ಶತ್ರುಗಳನು ಸದೆಬಡಿವೆನು ಅವನ ಮುಂದೆಯೆ I ಅವನ ವಿರೋಧಿಗಳನು ಹತಮಾಡುವೆನು ಅಲ್ಲಿಯೇ II</verse>
				<verse number="24">ನಿನ್ನ ಪ್ರೀತಿಸತ್ಯತೆಗಳು ಇರುವುವು ಅವನೊಂದಿಗೆ I ನನ್ನ ನಾಮ ಪ್ರಯುಕ್ತ ಕೋಡು ಮೂಡುವುದವನಿಗೆ II</verse>
				<verse number="25">ತೊರೆನದಿಗಳಿಂದ ಸಾಗರದವರೆಗೆ I ಅಧಿಕಾರ ನೀಡುವೆ ಅವನ ಕೈಗೆ II</verse>
				<verse number="26">‘ನನಗೆ ಪಿತ, ದೈವ, ದುರ್ಗ, ಉದ್ಧಾರಕ, ನೀನು’ I ಇಂತೆಂದೇ ನನ್ನನು ಸಂಬೋಧಿಸುವನವನು II</verse>
				<verse number="27">ಮಾಡುವೆನವನನು ಜೇಷ್ಠಪುತ್ರನನ್ನಾಗಿ I ಭೂರಾಜರುಗಳೊಳು ಅತ್ಯುನ್ನತನನ್ನಾಗಿ I</verse>
				<verse number="28">ಇರುವುದು ಎನ್ನಚಲ ಪ್ರೀತಿ ಅವನ ಮೇಲೆ ಶಾಶ್ವತವಾಗಿ I ಅವನೊಡನೆ ನಾ ಮಾಡಿದೊಪ್ಪಂದ ಸ್ಥಿರಸ್ಥಾಯಿಯಾಗಿ II</verse>
				<verse number="29">ಉಳಿಸುವೆನು ಅವನ ಸಂತಾನವನು ನಿರಂತರವಾಗಿ I ಅವನ ಸಿಂಹಾಸನವಿರುವುದು ಗಗನದಂತೆ ಸ್ಥಿರವಾಗಿ II</verse>
				<verse number="30">ಅವನ ಕುವರರು ತೊರೆದರಾದರೆ ನನ್ನ ಧರ್ಮಶಾಸ್ತ್ರವನು I ಉಲ್ಲಂಘಿಸಿ ನಡೆದರಾದರೆ ನನ್ನ ಆಜ್ಞಾವಿಧಿಗಳನು II</verse>
				<verse number="31">ಮೀರಿ ನಡೆದರಾದರೆ ನನ್ನ ಶಾಸನಗಳನು I ಪರಿಪಾಲಿಸದೆ ಹೋದರೆ ಎನ್ನ ನಿಯಮಗಳನು II</verse>
				<verse number="32">ದಂಡಿಸುವೆನವರ ದ್ರೋಹವನು ದಂಡದಿಂದ I ಶಿಕ್ಷಿಸುವೆನವರ ಅಪರಾಧವನು ಚಾಟಿಯಿಂದ II</verse>
				<verse number="33">ಆದರೆ ನನ್ನೊಲವು ಅವನನ್ನು ಕೈಬಿಡದು I ನನ್ನ ಪ್ರಾಮಾಣಿಕತೆಗದು ಚ್ಯುತಿಯಾಗದು II</verse>
				<verse number="34">ಭಂಗಪಡಿಸೆನು ಎನ್ನ ಒಡಂಬಡಿಕೆಯನು I ಮೀರೆನು ನಾನವನಿಗೆ ಕೊಟ್ಟ ಮಾತನು II</verse>
				<verse number="35">ಮಾಡಿರುವೆ ಪ್ರಮಾಣ ನನ್ನ ಪವಿತ್ರತೆಯ ಮೇಲೆ I ಸುಳ್ಳಾಡಲಾರೆ ದಾವೀದನಿಗೀ ವಿಷಯದ ಮೇಲೆ II</verse>
				<verse number="36">ರವಿಯಂತಿರುವುದು ಎನ್ನ ಮುಂದೆ ಅವನ ಗಾದಿ I ಚಿರ ಶಾಶ್ವತವಾಗಿರುವುದು ಅವನ ಸಂತತಿ II</verse>
				<verse number="37">ಅಮರವಾಗಿರುವುದು ಚಂದ್ರನಂತೆ I ಆಗಸದಾ ಪ್ರಮಾಣ ಸಾಕ್ಷಿಯಂತೆ” II</verse>
				<verse number="38">ಇಂತೆಂದ ನೀನೆ ತ್ಯಜಿಸಿರುವೆ ನಿನ್ನಾಭಿಷಿಕ್ತನನು I ತಳ್ಳಿಬಿಟ್ಟಿರುವೆ ಕೋಪಾವೇಶದಿಂದ ಅವನನು II</verse>
				<verse number="39">ಭಂಗಪಡಿಸಿರುವೆ ದಾಸನೊಡನೆ ಮಾಡಿದ ಒಡಂಬಡಿಕೆಯನು I ಮಣ್ಣುಪಾಲಾಗಿಸಿರುವೆ ಅವನ ಪಟ್ಟದ ಆ ಕಿರೀಟವನು II</verse>
				<verse number="40">ಸೀಳಿಬಿಟ್ಟಿರುವೆ ಅವನಾ ಪೌಳಿಗೋಡೆಗಳನು I ಹಾಳುಮಾಡಿಬಿಟ್ಟಿರುವೆ ಕೋಟೆಕೊತ್ತಲಗಳನು II</verse>
				<verse number="41">ಸುಲಿಗೆ ಮಾಡುತಿಹರವನನು ದಾರಿಗರೆಲ್ಲರು I ಪರಿಹಾಸ್ಯಕ್ಕೆ ಈಡುಮಾಡುತಿಹರು ನೆರೆಯವರು II</verse>
				<verse number="42">ಮೇಲಾಗಿಸಿರುವೆ ಅವನ ವಿರೋಧಿಗಳ ಕೈಯನು I ಉಲ್ಲಾಸಗೊಳಿಸಿರುವೆ ಅವನೆಲ್ಲಾ ವೈರಿಗಳನು II</verse>
				<verse number="43">ಮೊಂಡಾಗಿಸಿರುವೆ ಅವನ ಕತ್ತಿಯ ಮೊನೆಯನು I ಕಾಳಗಕೆ ನಿಲ್ಲದಂತಾಗಿಸಿರುವೆ ಅವನನು II</verse>
				<verse number="44">ಕಿತ್ತುಹಾಕಿರುವೆ ಅವನ ರಾಜದಂಡವನು I ನೆಲಕ್ಕೆ ಉರುಳಿಸಿರುವೆ ಅವನ ಸಿಂಹಾಸನವನು II</verse>
				<verse number="45">ಮುಪ್ಪಾಗಿಸಿರುವೆ ಅವನನು ಕಾಲಕ್ಕೆ ಮುಂಚೆ I ನಿನ್ನ ನಿಮಿತ್ತ ಅವನನು ಆವರಿಸಿದೆ ಲಜ್ಜೆ II</verse>
				<verse number="46">ಒಡೆಯಾ, ಚಿರಮರೆಯಾಗಿರುವೆ? ಇನ್ನೆಷ್ಟರವರೆಗೆ? I ನಿನ್ನ ಕೋಪಾಗ್ನಿ ಎಡೆಬಿಡದೆ ಉರಿಯುತ್ತಿರಬೇಕೆ? II</verse>
				<verse number="47">ಎಷ್ಟು ಅಲ್ಪವಾದುದೆನ್ನ ಜೀವಮಾನಕಾಲ I ಎಷ್ಟು ನಶ್ವರ ನೀ ನಿರ್ಮಿಸಿದ ಮಾನವ ಕುಲ! II</verse>
				<verse number="48">ಸಾಯದೆಯೇ ಜೀವಿಸಬಲ್ಲ ನರನಾರು? I ಆ ತಳದಿಂದ ತಪ್ಪಿಸಿಕೊಳ್ಳುವವನಾರು? II</verse>
				<verse number="49">ದಾವೀದನಿಗೆ ಪ್ರಭು, ನೀನಿತ್ತ ವಾಗ್ದಾನವೆಲ್ಲಿ? I ಗತಕಾಲದಲಿ ನೀ ತೋರಿದಚಲ ಪ್ರೀತಿಯೆಲ್ಲಿ? II</verse>
				<verse number="50">ನೆನೆಸಿಕೊ ಪ್ರಭು, ನಿನ್ನ ಅಪಮಾನಿತ ಸೇವಕನನು I ಸ್ಮರಿಸಿಕೊ ಆತ ಹೊತ್ತಿರುವ ಪರರ ನಿಂದೆಯನು II</verse>
				<verse number="51">ನಿಂದಿಸುತಿಹರು ಪ್ರಭು, ವೈರಿಗಳು ನಿನ್ನಭಿಷಿಕ್ತನನು I ಹೆಜ್ಜೆಹೆಜ್ಜೆಗು ಅವಮಾನಿಸುತಿಹರು ಶತ್ರುಗಳವನನು I ಆಮೆನ್, ಆಮೆನ್, ಪ್ರಭುವಿಗೆ ಸರ್ವದಾ ಧನ್ಯವಾದವು II</verse>
			</chapter>
			<chapter number="90">
				<verse number="1">ಪ್ರಭೂ, ತಲತಲಾಂತರಕ್ಕೆ I ಶ್ರೀನಿವಾಸ ನೀನೆಮಗೆ II</verse>
				<verse number="2">ಬೆಟ್ಟಗಳು ಹುಟ್ಟುವುದಕೆ ಮುಂಚಿನಿಂದ I ಭೂದೇಶಗಳು ಆಗುವುದಕೆ ಮೊದಲಿಂದ I ನೀನೆಮಗೆ ದೇವರು ಯುಗಯುಗಗಳಿಂದ II</verse>
				<verse number="3">ಇಳೆಯ ಮಾನವರನು ನೀ ಮಣ್ಣುಪಾಲಾಗಿಸುತಿಹೆ I ‘ನರಪುತ್ರರೇ, ಮರಳಿ ಮಣ್ಣಿಗೆ ಸೇರಿರಿ’ ಎನ್ನುತಿಹೆ II</verse>
				<verse number="4">ನಿನ್ನ ದೃಷ್ಟಿಯಲ್ಲಿ ಪ್ರಭೂ, ಸಹಸ್ರ ವರುಷ I ಇರುಳಿನೊಂದು ಜಾವ, ಗತಿಸಿಹೋದ ಒಂದು ದಿವಸ II</verse>
				<verse number="5">ಮನುಜರು ನೀ ಹರಿದೋಡಿಸುವ ಹೊಯಿಲು I ಇರುಳಿನ ಕನಸು, ಹಗಲಿನ ಗರಿಹುಲ್ಲು II</verse>
				<verse number="6">ಚಿಗುರಿ ಹೂಬಿಡುವುದದು ಬೆಳಗಿನಲಿ I ಸೊರಗಿ ತರಗಾಗುವುದು ಬೈಗಿನಲಿ II</verse>
				<verse number="7">ಇಲ್ಲವಾಗುವೆವು ನಿನ್ನ ಕೋಪದಿಂದ I ತಲ್ಲಣಗೊಳ್ವೆವು ನಿನ್ನ ರೌದ್ರದಿಂದ II</verse>
				<verse number="8">ನಿನ್ನ ನೋಟಕೆ ಮರೆಯಾಗಿಲ್ಲ ನಮ್ಮ ಪಾಪದೋಷಗಳು I ನಿನ್ನ ಮುಖಕಾಂತಿಗೆ ಬಟ್ಟಬಯಲಾಗಿವೆ ಗುಪ್ತಾಪರಾಧಗಳು II</verse>
				<verse number="9">ನಿನ್ನ ಕನಲಿನಲೇ ಕಳೆದಿವೆ ನಮ್ಮ ದಿನಗಳು I ನಿಟ್ಟುಸಿರಿನಂತೆ ಮುಗಿವುದೆಮ್ಮ ಬದುಕುಬಾಳು II</verse>
				<verse number="10">ನಮ್ಮ ಆಯುಷ್ಕಾಲ ಎಪ್ಪತ್ತು ವರುಷ I ಹೆಚ್ಚಾಗಿದ್ದರೆ ಬಲ, ಎಂಬತ್ತು ವರುಷ II</verse>
				<verse number="11">ನಿನ್ನ ಕೋಪದಾ ಪ್ರತಾಪವನು ಬಲ್ಲವನಾರು? I ಭಯಂಕರ ರೌದ್ರವನು ಅನುಭವಿಸುವವರಾರು? II</verse>
				<verse number="12">ಜೀವನಾವಧಿಯನು ಲೆಕ್ಕಿಸುವುದನು ನಮಗೆ ಕಲಿಸು I ಈ ಪರಿಜ್ಞಾನವುಳ್ಳಂಥ ಹೃದಯವನು ನೀ ಕರುಣಿಸು II</verse>
				<verse number="13">ಪ್ರಭು, ತಿರುಗಿ ಬಾ, ಕೋಪವೆಷ್ಟರ ತನಕ? I ನಿನ್ನೀ ಸೇವಕರ ಮೇಲಿರಲಿ ಮರುಕ II</verse>
				<verse number="14">ಉದಯದಲೆ ತೋಯಿಸೆಮ್ಮನು ನಿನ್ನ ಕೃಪೆಯಿಂದ I ಹರ್ಷಿಸಿ ಆನಂದಿಸುವೆವು ಆಗ ದಿನವಾದ್ಯಂತ II</verse>
				<verse number="15">ಸುಖಪಡಿಸೆಮ್ಮನು ನೀ ಕಷ್ಟಪಡಿಸಿದಷ್ಟು ಕಾಲ I ಕೆಡುಕನ್ನು ನಾವು ಅನುಭವಿಸಿದಷ್ಟು ವರ್ಷಕಾಲ II</verse>
				<verse number="16">ಪ್ರಕಟವಾಗಲಿ ನಿನ್ನ ರಕ್ಷಾಕಾರ್ಯ ಭಕ್ತರಿಗೆ I ನಿನ್ನ ಮಹಿಮಾಶಕ್ತಿ ಅವರ ಸಂತಾನಕೆ II</verse>
				<verse number="17">ಸ್ವಾಮಿದೇವರ ಆಶೀರ್ವಾದ ನಮ್ಮ ಮೇಲಿರಲಿ I ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ I ಅಹುದು, ನಮ್ಮ ಕಾರ್ಯಗಳೆಲ್ಲಾ ಸಫಲವಾಗಲಿ II</verse>
			</chapter>
			<chapter number="91">
				<verse number="1">ಪರಾತ್ಪರ ಪ್ರಭುವಿನ ಮೊರೆಹೊಕ್ಕಿರುವವನು I ಸರ್ವಶಕ್ತನ ಆಶ್ರಯದಲಿ ಸುರಕ್ಷಿತನು II</verse>
				<verse number="2">ನಾನಾತನಿಗೆ, ‘ನೀನೇ ನನ್ನ ರಕ್ಷಕನೂ I ದುರ್ಗವೂ ನಾ ನಂಬಿದ ದೇವನು’ ಎನ್ನುವೆನು II</verse>
				<verse number="3">ತಪ್ಪಿಸುವನಾತನು ಬೇಟೆಗಾರನ ಬಲೆಯಿಂದ I ರಕ್ಷಿಸುವನು ಮಾರಕವಾದ ವ್ಯಾಧಿಯಿಂದ II</verse>
				<verse number="4">ಹುದುಗಿಸುವನು ನಿನ್ನನು ತನ್ನ ಗರಿಗಳ ತೆಕ್ಕೆಯಲಿ I ಆಶ್ರಯಪಡುವೆ ನೀ ಆತನ ರೆಕ್ಕೆಗಳಡಿಯಲಿ I ರಕ್ಷಣೆಯ ಕವಚವಿದೆ ಆತನು ಕೊಟ್ಟ ಮಾತಿನಲಿ II</verse>
				<verse number="5">ನೀನು ಅಂಜಬೇಕಾಗಿಲ್ಲ ಇರುಳಿನ ದುರಿತಕೆ I ಹಗಲಿನಲಿ ಹಾರಿಬರುವ ಬಿರುಸು ಬಾಣಕೆ II</verse>
				<verse number="6">ಕತ್ತಲೆಯಲಿ ಸಂಚರಿಸುವ ವಿಪತ್ತಿಗೆ I ನಡುಹಗಲಲೆ ಪೀಡಿಸುವ ಜಾಡ್ಯಕೆ II</verse>
				<verse number="7">ಬೀಳಬಹುದು ಸಾವಿರ ಹೆಣಗಳು ಪಕ್ಕದಲೆ I ಹತ್ತುಸಾವಿರ ಹೆಣಗಳು ನಿನ್ನ ಬಲಗಡೆಯಲೆ I ಅಂಥ ಕೇಡೊಂದೂ ಬಾರದು ನಿನ್ನ ಪಾಲಿಗೆ II</verse>
				<verse number="8">ನೀನಿದನು ಕಣ್ಣಾರೆ ಕಾಣುವೆ I ದುರುಳರ ದಂಡನೆಯನು ನೋಡುವೆ II</verse>
				<verse number="9">ಪ್ರಭುವನೆ ನಿನ್ನಾಶ್ರಯವಾಗಿಸಿಕೊಂಡಿರುವುದರಿಂದ I ಪರಾತ್ಪರನನೆ ನಿನ್ನ ನಿವಾಸ ಆಗಿಸಿಕೊಂಡದ್ದರಿಂದ II</verse>
				<verse number="10">ಹಾನಿಯೊಂದೂ ನಿನಗೆ ಸಂಭವಿಸದು I ಕೆಡಕು ನಿನ್ನ ಗುಡಾರದ ಬಳಿ ಸುಳಿಯದು II</verse>
				<verse number="11">ನೀನು ಹೋದೆಡೆಯೆಲ್ಲಾ ನಿನ್ನ ಕಾಯುವುದಕ್ಕೆ I ಕೊಟ್ಟಿಹನಾತ ಕಟ್ಟಳೆ ತನ್ನ ದೂತರಿಗೆ II</verse>
				<verse number="12">ನಿನ್ನ ಕಾಲು ಕಲ್ಲಿಗೆ ತಾಗದಂತೆ I ನಿನ್ನನೆತ್ತಿಕೊಳ್ವರವರು ಕೈಗಳಲೆ II</verse>
				<verse number="13">ಸಿಂಹಗಳ ಮೇಲೂ, ಸರ್ಪಗಳ ಮೇಲೂ ನಡೆಯುವೆ I ಪ್ರಾಯದ ಸಿಂಹವನು, ಘಟಸರ್ಪವನು ತುಳಿದುಬಿಡುವೆ II</verse>
				<verse number="14">ಪ್ರಭು: “ನನ್ನ ಭಕ್ತನಾದ್ದರಿಂದ ವಿಮೋಚಿಸುವೆನು ಅವನನು I ನನ್ನ ನಾಮವನು ಅರಿತವನಾದ್ದರಿಂದ ರಕ್ಷಿಸುವೆನು II</verse>
				<verse number="15">ನನಗೆ ಮೊರೆಯಿಟ್ಟಾಗ ಕಿವಿಗೊಡುವೆನು I ಸಂಕಟದೊಳು ಅವನ ಸಂಗಡವಿರುವೆನು I ಅವನನು ಉದ್ಧರಿಸಿ ಘನಪಡಿಸುವೆನು II</verse>
				<verse number="16">ದೀರ್ಘಾಯುಸ್ಸನ್ನಿತ್ತು ತೃಪ್ತಿಪಡಿಸುವೆನು I ನಾನು ನೀಡುವ ಮುಕ್ತಿಯನವನಿಗೆ ಮನಗಾಣಿಸುವೆನು” II</verse>
			</chapter>
			<chapter number="92">
				<verse number="1">ಹೇ ಪ್ರಭೂ, ನಿನ್ನ ಗುಣಗಾನ ಮಂಗಳಕರ I ಪರಾತ್ಪರನೆ, ನಿನ್ನ ನಾಮಭಜನೆ ಹಿತಕರ II</verse>
				<verse number="2">ಪ್ರಾತಃಕಾಲದಲೆ ನಿನ್ನ ಪ್ರೀತಿಯನು I ರಾತ್ರಿಕಾಲದಲೆ ನಿನ್ನ ಸತ್ಯತೆಯನು II</verse>
				<verse number="3">ವರ್ಣಿಸುವುದುಚಿತ ವೀಣಾ ಸ್ವರಮಂಡಲದಿಂದ I ಕೊಳಲ ದನಿಯಿಂದ, ಕಿನ್ನರಿಯ ನಾದಸ್ವರದಿಂದ II</verse>
				<verse number="4">ನಿನ್ನ ಕಾರ್ಯಗಳಿಂದ ಪ್ರಭು, ನನ್ನನ್ನು ಆನಂದಗೊಳಿಸಿರುವೆ I ನಿನ್ನಾ ಕಾರ್ಯಗಳ ನೋಡಿ, ನಾನು ಉಲ್ಲಾಸದಿಂದ ಹಾಡುವೆ II</verse>
				<verse number="5">ಪ್ರಭು, ನಿನ್ನ ಕೃತ್ಯಗಳೆನಿತೋ ಅಮೂಲ್ಯ I ನಿನ್ನಾಲೋಚನೆಗಳು ಎನಿತೋ ಅಶೋಧ್ಯ II</verse>
				<verse number="6">ಇದನರಿಯನು ಪಶುಪ್ರಾಯನು I ಇದ ತಿಳಿಯನು ಬುದ್ಧಿಹೀನನು II</verse>
				<verse number="7">ದುರುಳರು ಚಿಗುರಬಹುದು ಹುಲ್ಲಿನಂತೆ I ಕೆಡುಕರು ಅರಳಬಹುದು ಹೂವಿನಂತೆ I ಅವರ ಅಳಿವಂತೂ ಕಟ್ಟಿಟ್ಟ ಬುತ್ತಿಯಂತೆ II</verse>
				<verse number="8">ನೀನಾದರೊ ಪ್ರಭು, ಸರ್ವದಾ ಇರುವೆ I ಮಹೋನ್ನತದೊಳು ವಿರಾಜಿಸುತ್ತಿರುವೆ II</verse>
				<verse number="9">ಕಾಡುಕೋಣದ ಕೊಂಬಿನ ಬಲವನು ನನಗಿತ್ತಿರುವೆ I ಚೈತನ್ಯದ ತೈಲದಿಂದ ನನ್ನನು ಅಭ್ಯಂಜಿಸಿರುವೆ II</verse>
				<verse number="10">ನಿನ್ನ ಶತ್ರುಗಳ ವಿನಾಶ ನಿಶ್ಚಿತ I ಕೆಡುಕರೆಲ್ಲ ಚದರಿ ಪೋಪುದು ಖಚಿತ II</verse>
				<verse number="11">ನಾ ಕಣ್ಣಾರೆ ಕಂಡಿರುವೆ ಶತ್ರುಗಳಿಗಾದ ದುರ್ಗತಿಯನು I ಕಿವಿಯಾರೆ ಕೇಳಿರುವೆ ನನ್ನ ವಿರೋಧಿಗಳಿಗಾದ ವಿಪತ್ತನು II</verse>
				<verse number="12">ಬೆಳೆಯುವರು ಸಜ್ಜನರು ಖರ್ಜೂರದ ವೃಕ್ಷದಂತೆ I ವೃದ್ಧಿಯಾಗುವರು ಲೆಬನೋನಿನ ದೇವದಾರಿನಂತೆ II</verse>
				<verse number="13">ಅವರಿರುವರು ಪ್ರಭುವಿನಾಲಯದಲೆ ನೆಟ್ಟ ಸಸಿಗಳಂತೆ I ನಮ್ಮ ದೇವಾಂಗಳದಿ ಹುಲುಸಾಗಿ ಬೆಳೆವ ಮರಗಳಂತೆ I ಫಲಿಸುವರು ಮುಪ್ಪಿನಲೂ, ಶೋಭಿಸುವರು ಪಚ್ಚೆಪಸಿರಂತೆ II</verse>
				<verse number="14"></verse>
				<verse number="15">ಈ ಪರಿ ಪಡೆವುದು ಸಾಕ್ಷ್ಯ ಪ್ರಭುವಿನಾ ಸತ್ಯಸಂಧತೆ I ಆತನೇ ನನಗೆ ಪೊರೆಬಂಡೆ, ಆತನಲ್ಲಿಲ್ಲ ವಕ್ರತೆ II</verse>
			</chapter>
			<chapter number="93">
				<verse number="1">ವಹಿಸಿಹನು ಪ್ರಭು, ರಾಜ್ಯಾಧಿಕಾರವನು I ಧರಿಸಿಹನು ಘನತೆಯ ವಸ್ತ್ರ ಲಾಂಛನವನು I ತೊಟ್ಟಿಹನು ಶೌರ್ಯವೆಂಬ ನಡುಕಟ್ಟನು I ಸ್ಥಿರಪಡಿಸಿಹನು ಕದಲದಂತೆ ಜಗವನು II</verse>
				<verse number="2">ನಿನ್ನ ಸಿಂಹಾಸನ ಸ್ಥಿರ ಆದಿಯಿಂದ I ನೀನಿರುವೆ ಪ್ರಭು ಅನಾದಿಯಿಂದ II</verse>
				<verse number="3">ಸಮುದ್ರಗಳು ಪ್ರಭು, ಮೊರೆಯುತಿಹವು I ಗರ್ಜನೆಗೈದು ಭೋರ್ಗರೆಯುತಿಹವು II</verse>
				<verse number="4">ಸಾಗರಗಳ ಗರ್ಜನೆಗಿಂತ I ಸಮುದ್ರ ತರಂಗಗಳಿಗಿಂತ I ಮಹೋನ್ನತ ಪ್ರಭು ಬಲವಂತ II</verse>
				<verse number="5">ನಿನ್ನ ಆಜ್ಞೆಗಳು ಪ್ರಭು, ಸುಸ್ಥಿರ I ನಿನ್ನ ಆಲಯಕೆ ಪವಿತ್ರತೆ ಅರ್ಹ I ಯುಗಯುಗಾಂತರಕೂ ಅದು ಅರ್ಹ II</verse>
			</chapter>
			<chapter number="94">
				<verse number="1">ಹೇ ಪ್ರಭು, ಮುಯ್ಯಿತೀರಿಸುವ ದೇವಾ I ಮುಯ್ಯಿತೀರಿಸಲು ಎದ್ದುಬಾರಯ್ಯಾ II</verse>
				<verse number="2">ಪ್ರಭೂ, ಲೋಕದ ನ್ಯಾಯಾಧಿಪತಿ I ಏಳು, ಗರ್ವಿಗಳಿಗೆ ಮಾಡು ತಕ್ಕಶಾಸ್ತಿ II</verse>
				<verse number="3">ಎಲ್ಲಿಯವರೆಗೆ ಪ್ರಭು, ಎಲ್ಲಿಯವರೆಗೆ? I ದುರುಳರು ಹಿಗ್ಗುತ್ತಲೆ ಇರಬೇಕು ಹೀಗೆ? II</verse>
				<verse number="4">ಉಬ್ಬಿಹೋಗಿಹರು ಕೆಡುಕರೆಲ್ಲರು I ಜಂಬ ಕೊಚ್ಚಿಕೊಳ್ಳುತ್ತಿಹರು ಅವರು II</verse>
				<verse number="5">ನಸುಕಿ ಹಾಕುತಿಹರು ನಿನ್ನ ಪ್ರಜೆಯನು I ಹಿಂಸಿಸುತಿಹರು ನಿನ್ನ ಸ್ವಕೀಯರನು II</verse>
				<verse number="6">ವಧಿಸುತಿಹರು ವಿಧವೆಯರನು, ಪರದೇಶಿಯರನು I ಹತ್ಯಮಾಡುತಿಹರು ಗತಿಯಿಲ್ಲದ ಅನಾಥರನು II</verse>
				<verse number="7">ಅವರಾಡಿಕೊಳ್ಳುತಿಹರು ಪ್ರಭು ನೋಡನೆಂದು I ಯಕೋಬ್ಯರ ಸ್ವಾಮಿದೇವ ವಿಚಾರಿಸನೆಂದು II</verse>
				<verse number="8">ಮೂರ್ಖರೇ, ನಿಮಗೆ ಜ್ಞಾನೋದಯವಾಗುವುದಾವಾಗ? I ಪಶುಪ್ರಾಯರಾದ ಪ್ರಜೆಗಳು ಗಮನಿಸುವುದಾವಾಗ? II</verse>
				<verse number="9">ಕಿವಿಮಾಡಿದವನು ಕೇಳದಿರುವನೋ? I ಕಣ್ಣುಕೊಟ್ಟವನು ನೋಡದಿರುವನೋ? II</verse>
				<verse number="10">ರಾಷ್ಟ್ರಗಳನು ಖಂಡಿಸುವವನು ದಂಡಿಸದಿರುವನೋ? I ಮನುಜರಿಗೆ ಬುದ್ಧಿಕಲಿಸುವವನು ಬುದ್ಧಿಹೀನನೋ? II</verse>
				<verse number="11">ಮನುಜರಾಲೋಚನೆಗಳು ತಿಳಿದೇ ಇವೆ ಪ್ರಭುವಿಗೆ I ಉಸಿರಿನಷ್ಟೇ ವ್ಯರ್ಥವೆಂದು ಗೊತ್ತಿದೆ ಆತನಿಗೆ II</verse>
				<verse number="12">ಪ್ರಭು, ನಿನ್ನಿಂದ ಶಿಕ್ಷಿತನಾದ ಮಾನವ ಧನ್ಯ I ನಿನ್ನಿಂದ ಧರ್ಮೋಪದೇಶ ಪಡೆದವನು ಧನ್ಯ II</verse>
				<verse number="13">ನೆಮ್ಮದಿ ನೀಡುವೆ ಅವನು ಸಂಕಟದಲಿರುವಾಗ I ದುರುಳರಿಗೆ ನೀನು ಗುಂಡಿಯನು ತೋಡುವಾಗ II</verse>
				<verse number="14">ತಳ್ಳಿಬಿಡಲು ಪ್ರಭು ತನ್ನ ಜನರನು I ಕೈಬಿಡನವನು ತನ್ನ ಸ್ವಕೀಯರನು II</verse>
				<verse number="15">ನ್ಯಾಯತೀರ್ಪು ಮರಳಿ ತಿರುಗುವುದು ನೀತಿಯತ್ತ I ನೇರಮನಸ್ಕರೆಲ್ಲ ಮಾಡುವರು ಅದನು ಸಮರ್ಥ II</verse>
				<verse number="16">ದುರುಳರಿಗೆದುರಾಗಿ ನನ್ನ ಪಕ್ಷ ವಹಿಸುವರಾರು? I ಕೆಡುಕರಿಗೆ ವಿರುದ್ಧ ನನ್ನ ಪರ ನಿಲ್ಲುವವರಾರು? II</verse>
				<verse number="17">ನನಗಿಲ್ಲದಿದ್ದರೆ ಪ್ರಭುವಿನ ಮರುಕ I ಮನೆಯಾಗುತ್ತಿತ್ತೆನಗೆ ಅಧೋಲೋಕ II</verse>
				<verse number="18">ನನ್ನ ಕಾಲು ಜಾರಿಹೋಯಿತು ಎನ್ನುವುದರೊಳಗೆ I ನಿನ್ನ ಅಚಲ ಪ್ರೀತಿ, ಪ್ರಭು ನೆರವಾಯಿತೆನಗೆ II</verse>
				<verse number="19">ನನ್ನ ಅಂತರಂಗದಲಿ ಏಳಲು ಆಂದೋಲನ I ತಂದಿತೆನ್ನ ಮನಕೆ ಆನಂದ ನಿನ್ನ ಸಾಂತ್ವನ II</verse>
				<verse number="20">ಅನ್ಯಾಯಸ್ಥಾಪಕರಿಗೂ ನಿನಗೂ ಸಂಬಂಧವೆಲ್ಲಿ I ಕೇಡನು ಕಲ್ಪಿಸುತ್ತಾರವರು ಶಾಸನದ ಹೆಸರಿನಲ್ಲಿ II</verse>
				<verse number="21">ಹೊಂಚುಹಾಕುವರವರು ನೀತಿವಂತರ ಪ್ರಾಣಕೆ I ಮರಣಶಿಕ್ಷೆ ವಿಧಿಸುವರವರು ನಿರಪರಾಧಿಗಳಿಗೆ II</verse>
				<verse number="22">ನನಗೋ ಪ್ರಭುವೇ ಕಲ್ಲು ಕೋಟೆ I ನನಗಾಶ್ರಯ ನೀಡುವ ಪೊರೆಬಂಡೆ II</verse>
				<verse number="23">ದಂಡಿಸುವನಾ ಕೆಡುಕರನು ಅವರ ಕೆಟ್ಟತನಕ್ಕಾಗಿ I ನಿರ್ಮೂಲ ಮಾಡುವನಾ ಜನರ ದುಷ್ಟತನಕ್ಕಾಗಿ I ನಮ್ಮೊಡೆಯ ದೇವನು ಸಂಹರಿಸಿಬಿಡುವನು ಈ ಕಾರಣಕ್ಕಾಗಿ II</verse>
			</chapter>
			<chapter number="95">
				<verse number="1">ಬನ್ನಿ, ಸ್ತುತಿಗೀತೆ ಹಾಡೋಣ ಬನ್ನಿ, ಪ್ರಭುವಿಗೆ I ಜಯಘೋಷ ಮಾಡೋಣ ನಮ್ಮ ರಕ್ಷಕ ದೇವನಿಗೆ II</verse>
				<verse number="2">ಆತನ ಸನ್ನಿಧಿ ಸೇರೋಣ ಕೃತಜ್ಞತಾಸ್ತುತಿಯೊಂದಿಗೆ I ಜಯಜಯಕಾರ ಮಾಡೋಣ ಕೀರ್ತನೆಗಳಿಂದಾತನಿಗೆ II</verse>
				<verse number="3">ಏಕೆಂದರೆ ಪ್ರಭು ದೇವಾಧಿದೇವನು I ದೇವರುಗಳಲೆಲ್ಲ ರಾಜಾಧಿರಾಜನು II</verse>
				<verse number="4">ಆತನ ಕೈಯಲ್ಲಿವೆ ಬುವಿಯಂತರಾಳಗಳು I ಆತನವೇ ಪರ್ವತಗಳಾ ತುತ್ತತುದಿಗಳು II</verse>
				<verse number="5">ಸಮುದ್ರವು ಆತನದೆ-ಅದ ನಿರ್ಮಿಸಿದವ ಆತನೆ I ಒಣನೆಲವು ಆತನದೆ-ಅದ ರೂಪಿಸಿದವ ಆತನೆ II</verse>
				<verse number="6">ಬನ್ನಿ ಆರಾಧಿಸೋಣ ಬನ್ನಿ, ಬಾಗಿ ವಂದಿಸೋಣ I ನಮ್ಮನು ಸೃಜಿಸಿದಾ ಪ್ರಭುವಿಗೆ ಸಾಷ್ಟಾಂಗವೆರಗೋಣ II</verse>
				<verse number="7">ಆತನೆಮ್ಮ ದೇವರು, ನಾವು ಆತನ ಕೈಮಂದೆ I ಆತನಿಂದಲೇ ಪಾಲನೆಪೋಷಣೆ ಪಡೆದ ಜನತೆ II</verse>
				<verse number="8">ಆತನ ಕರೆಗೆ ಕಿವಿಗೊಟ್ಟರೆನಿತೋ ಒಳ್ಳಿತು ನೀವಿಂದೇ I ಕಲ್ಲಾಗಿಸಿಕೊಳ್ಳದಿರಿ ಹೃದಯವನು ನಿಮ್ಮ ಪೂರ್ವಜರಂತೆ I ಮೆರಿಬಾದಲಿ, ಮಸ್ಸಾ ಮರುಭೂಮಿಯಲಿ ಅವರು ಮಾಡಿದಂತೆ II</verse>
				<verse number="9">ನೋಡಿದರಾದರೂ ನನ್ನ ಮಹತ್ಕಾರ್ಯಗಳನು I ಅಲ್ಲವರು ಕೆಣಕಿದರು, ಪರಿಶೋಧಿಸಿದರು ನನ್ನನು II</verse>
				<verse number="10">ನಲವತ್ತು ವರುಷ ಆ ಪೀಳಿಗೆಯ ಬಗ್ಗೆ ನಾ ಬೇಸರಗೊಂಡೆ I ‘ತಪ್ಪುಮನಸ್ಕರು ಇವರು, ನನ್ನ ಮಾರ್ಗವನು ಮೆಚ್ಚರಿವರು’ ಎಂದುಕೊಂಡೆ II</verse>
				<verse number="11">ಎಂತಲೆ ಸೇರರಿವರು ನನ್ನ ವಿಶ್ರಾಂತಿ ನೆಲೆ I ಎಂದು ಸಿಟ್ಟಿನಿಂದ ಕೆರಳಿ ನಾ ಶಪಥಮಾಡಿದೆ II</verse>
			</chapter>
			<chapter number="96">
				<verse number="1">ಹೊಸಗೀತೆಯನು ಹಾಡಿರಿ ಪ್ರಭುವಿಗೆ I ವಿಶ್ವವೆಲ್ಲವು ಹಾಡಲಿ ಆತನಿಗೆ II</verse>
				<verse number="2">ಪ್ರಭುವಿಗೆ ಹಾಡಿರಿ, ಆತನ ನಾಮವನು ಕೊಂಡಾಡಿರಿ I ಆತನ ಮುಕ್ತಿಮಾರ್ಗವನು ಪ್ರತಿನಿತ್ಯವೂ ಸಾರಿರಿ II</verse>
				<verse number="3">ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ I ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ II</verse>
				<verse number="4">ಏಕೆನೆ ಮಹಾತ್ಮನು ಪ್ರಭು, ಬಲು ಸ್ತುತ್ಯರ್ಹನು I ಸಕಲ ದೇವರುಗಳಿಗಿಂತಲೂ ಘನಗಂಭೀರನು II</verse>
				<verse number="5">ಶೂನ್ಯ ಪ್ರತಿಮೆಗಳು ಅನ್ಯರಾಷ್ಟ್ರಗಳ ದೇವರುಗಳೆಲ್ಲ I ಪ್ರಭುವಿನಿಂದಲೇ ಉಂಟಾಯಿತು ಆಕಾಶಮಂಡಲವೆಲ್ಲ II</verse>
				<verse number="6">ಇವೆ ಮಹಿಮೆ, ಮಹತ್ವ, ಆತನ ಸನ್ನಿಧಿಯಲಿ I ಶಕ್ತಿಸೌಂದರ್ಯ ಆತನ ಗರ್ಭಗುಡಿಯಲಿ II</verse>
				<verse number="7">ಶಕ್ತಿಸಾಮರ್ಥ್ಯ ಪ್ರಭುವಿನದೇ ಎಂದು I ಜಗದ ರಾಷ್ಟ್ರಗಳು ಘನಪಡಿಸಲಿ ಆತನನು ಎಂದೆಂದು II</verse>
				<verse number="8">ಆತನ ನಾಮಕೆ ತನ್ನಿ ಘನತೆಗೌರವವನು I ಆತನ ಮಂದಿರಕೆ ಬನ್ನಿ ಕಾಣಿಕೆ ಹೊತ್ತು II</verse>
				<verse number="9">ಪ್ರಭುವಿಗೆ ಮಣಿಯಿರಿ ಪವಿತ್ರ ವಸ್ತ್ರಧಾರಿಗಳಂತೆ I ಅಂಜಿಕೆಯಿಂದ ನಡುಗಲಿ ಜಗವಿಡೀ ಆತನ ಮುಂದೆ I</verse>
				<verse number="10">ಪ್ರಭು ರಾಜನೆಂದು ಸಾರಿರಿ ರಾಷ್ಟ್ರಗಳಿಗೆ I ಕದಲದ ಸ್ಥಿರತೆಯನು ಇತ್ತಿಹನು ಧರೆಗೆ I ನ್ಯಾಯವಾದ ತೀರ್ಪು ಕೊಡುವನು ಜನಾಂಗಕೆ II</verse>
				<verse number="11">ಹರ್ಷಿಸಲಿ ಆಕಾಶವು, ಸಂತೋಷಿಸಲಿ ಭೂಲೋಕವು I ಗರ್ಜಿಸಲಿ ಸಮುದ್ರವು ಮತ್ತು ಅದರೊಳಿರುವುದೆಲ್ಲವು II</verse>
				<verse number="12">ಉಲ್ಲಾಸಿಸಲಿ ಹೊಲಗದ್ದೆಗಳು, ಪೈರುಪಚ್ಚೆಗಳು I ಹರ್ಷಧ್ವನಿಗೈಯಲಿ ಕಾಡಿನ ಫಲವೃಕ್ಷಗಳು II</verse>
				<verse number="13">ಪ್ರಭು ಧರೆಗೆ ನ್ಯಾಯತೀರಿಸಲು ಬಂದೇ ಬರುವನು ಖರೆಯಾಗಿ I ಜಗಕು, ಜನತೆಗು ತೀರ್ಪಿಡುವನು ನೀತಿನಿಯಮಾನುಸಾರವಾಗಿ II</verse>
			</chapter>
			<chapter number="97">
				<verse number="1">ಇದೆ ಪ್ರಭುವಿನ ಕೈಯಲಿ ರಾಜ್ಯಾಧಿಕಾರ I ಉಲ್ಲಾಸಿಸಲಿ ಧರಣಿಮಂಡಲದಾದ್ಯಂತ I ಸಂತೋಷಿಸಲಿ ಕಡಲಿನ ದ್ವೀಪಗಳೆಲ್ಲ II</verse>
				<verse number="2">ಇವೇ ಮುಗಿಲೂ ಕಾರ್ಮುಗಿಲೂ ಆತನ ಸುತ್ತಲು I ನ್ಯಾಯ-ನೀತಿ ಆತನ ಗದ್ದುಗೆಯಸ್ತಿವಾರಗಳು II</verse>
				<verse number="3">ಚಲಿಸುತ್ತಿದೆ ಬೆಂಕಿ ಆತನ ಮುಂದುಗಡೆ I ಸುಡುತ್ತದೆ ಆತನ ವೈರಿಗಳನು ಎಲ್ಲೆಡೆ II</verse>
				<verse number="4">ಇಳೆಯನು ಬೆಳಗಿಸುತ್ತದೆ ಆತನ ಮಿಂಚು I ನಡುಗುತ್ತದೆ ಭೂಮಿ ಅದಕೆ ಬೆಚ್ಚುಬಿದ್ದು II</verse>
				<verse number="5">ಸಾರ್ವಭೌಮನಾದ ಪ್ರಭುವಿನ ಮುಂದೆ I ಕರಗುತ್ತವೆ ಬೆಟ್ಟಗುಡ್ಡಗಳು ಮೇಣದಂತೆ II</verse>
				<verse number="6">ಘೋಷಿಸುತ್ತದೆ ಗಗನಮಂಡಲ ಆತನ ನೀತಿಯನು I ಕಾಣುತ್ತವೆ ಸಕಲ ಜನಾಂಗ ಆತನ ಮಹಿಮೆಯನು II</verse>
				<verse number="7">ನಾಚಲಿ ವ್ಯರ್ಥವಿಗ್ರಹಗಳನು ಪೂಜಿಸಿ ಹಿಗ್ಗುವವರು I ಪ್ರಭುವಿಗೆ ಅಡ್ಡಬೀಳಲಿ ಆ ದೇವರುಗಳೆಲ್ಲರು II</verse>
				<verse number="8">ಪ್ರಭು, ನಿನ್ನ ನ್ಯಾಯತೀರ್ಪನು ಕುರಿತು I ಸಿಯೋನ್ ನಗರವು ಆನಂದಪಟ್ಟಿತು I ಜುದೇಯ ಪ್ರಾಂತ್ಯವು ಹರ್ಷಗೊಂಡಿತು II</verse>
				<verse number="9">ಸರ್ವಾಧಿಕಾರಿ ನೀನು ಲೋಕಕ್ಕೆಲ್ಲಾ I ಮಹೋನ್ನತನು ನೀನು ದೇವರುಗಳಿಗೆಲ್ಲಾ II</verse>
				<verse number="10">ಕೇಡನು ಹಗೆಮಾಡುವವನಿಗೆ ಪ್ರಭು ಒಲಿವನು I ತನ್ನ ಭಕ್ತರ ಪ್ರಾಣವನು ಕಾಪಾಡುವನು I ದುಷ್ಟರ ಕೈಯಿಂದವರನು ಬಿಡಿಸುವನು II</verse>
				<verse number="11">ಉದಯವಾಗುವುದು ಜ್ಯೋತಿ ಸಜ್ಜನರಿಗೆ I ಆನಂದವಿದೆ ಯಥಾರ್ಥ ಹೃದಯಿಗಳಿಗೆ II</verse>
				<verse number="12">ಸಜ್ಜನರೇ, ಪ್ರಭುವಿನಲಿ ಆನಂದಿಸಿರಿ I ಆತನ ಶ್ರೀನಾಮವನು ಕೊಂಡಾಡಿರಿ II</verse>
			</chapter>
			<chapter number="98">
				<verse number="1">ಹಾಡಿರಿ ಪ್ರಭುವಿಗೆ ಹೊಸಗೀತೆಯೊಂದನು I ಎಸಗಿಹನಾತನು ಪವಾಡಕಾರ್ಯಗಳನು I ಗಳಿಸಿತಾತನ ಕೈ ಪೂತಭುಜ ಗೆಲುವನು II</verse>
				<verse number="2">ಪ್ರಕಟಿಸಿಹನಾ ಪ್ರಭು ತನ್ನ ಮುಕ್ತಿವಿಧಾನವನು I ರಾಷ್ಟ್ರಗಳಿಗೆ ತೋರಿಸಿಹನು ಜೀವೋದ್ಧಾರಕಾ ಶಕ್ತಿಯನು II</verse>
				<verse number="3">ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I ನಮ್ಮ ದೇವ ಸಾಧಿಸಿದ ಜಯಗಳಿಕೆ II ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II</verse>
				<verse number="4">ಭೂನಿವಾಸಿಗಳೇ, ಮಾಡಿರಿ ಜಯಕಾರ ಪ್ರಭುವಿಗೆ I ಮುದದಿ ಹಾಡಿರಿ, ಮಾಡಿರಿ ಸುಮಧುರ ಭಜನೆ II</verse>
				<verse number="5">ಪ್ರಭುವನು ಸ್ತುತಿಸಿರಿ ಕಿನ್ನರಿಯೊಂದಿಗೆ I ಭಜಿಸಿರಿ ಆತನನು ವಾದ್ಯಮೇಳದೊಂದಿಗೆ II</verse>
				<verse number="6">ಊದಿರಿ ಕೊಂಬನು, ತುತೂರಿಯನು I ಉದ್ಘೋಷಿಸಿರಿ ಪ್ರಭು ರಾಜನನು II</verse>
				<verse number="7">ಗರ್ಜಿಸಲಿ ಸಮುದ್ರವು ಅದರಲ್ಲಿರುವುದೆಲ್ಲವು I ಕೀರ್ತಿಸಲಿ ಜಗವು, ಅದರೊಳು ವಾಸಿಸುವ ಜನರೆಲ್ಲರು II</verse>
				<verse number="8">ಚಪ್ಪಾಳೆ ಹೊಡೆಯಲಿ ನದಿಗಳು I ತಟ್ಟಾಡಲಿ ಬೆಟ್ಟಗುಡ್ಡಗಳು II</verse>
				<verse number="9">ಏಕೆನೆ ಬರುವನಾತ ಇಹಲೋಕಕೆ ನ್ಯಾಯತೀರಿಸಲು I ಜಗಕು, ಜನತೆಗು, ನ್ಯಾಯನೀತಿಗನುಸಾರ ತೀರ್ಪುಕೊಡಲು II</verse>
			</chapter>
			<chapter number="99">
				<verse number="1">ವಹಿಸಿಹನು ಪ್ರಭು ರಾಜ್ಯಾಧಿಕಾರವನು: ನಡುಗುತಿಹುದು ಜನಾಂಗವು I ಕೆರೂಬಿಯರ ಮಧ್ಯೆ ಆಸೀನನಾಗಿಹನು: ಕಂಪಿಸುತಿಹುದು ಜಗವು II</verse>
				<verse number="2">ಸಿಯೋನಿನಲಿ ಪ್ರಭು ಶ್ರೇಷ್ಠನು I ರಾಷ್ಟ್ರಗಳಲ್ಲೆಲ್ಲಾ ಉತ್ಕೃಷ್ಠನು II</verse>
				<verse number="3">ಆತ ಪರಮ ಪವಿತ್ರನು, ಸ್ತುತಿಸಲಿ ಅವರೆಲ್ಲರು I ಆತ ಘನಗಂಭೀರನು, ಸ್ತುತಿಸಲಿ ಆತನ ಶ್ರೀನಾಮವನು II</verse>
				<verse number="4">ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II</verse>
				<verse number="5">ಪರಮ ಪಾವನನು ನಮ್ಮೀ ಸ್ವಾಮಿ ದೇವನು I ಹೊಗಳಿರಿ, ಆತನ ಪಾದಪೀಠಕೆ ಅಡ್ಡಬೀಳಿರಿ ನೀವೆಲ್ಲರು II</verse>
				<verse number="6">ಪ್ರಭುವಿನ ಯಾಜಕರು, ಮೋಶೆ ಮತ್ತು ಆರೋನನು I ಸಮುವೇಲನು ಸಹ ಆತನ ಶರಣರಲಿ ಒಬ್ಬನು I ಪ್ರಾರ್ಥಿಸಲು ಇವರು, ಪ್ರಭುವು ಸದುತ್ತರಿಸಿದನು II</verse>
				<verse number="7">ಮೇಘಸ್ತಂಭದಲಿದ್ದು ಅವರೊಡನೆ ಮಾತಾಡಿದನು I ಕೈಗೊಂಡರು ಅವರು ಆತನಿತ್ತ ವಿಧಿನಿಯಮಗಳನು II</verse>
				<verse number="8">ಸ್ವಾಮಿ ದೇವಾ, ನೀನವರಿಗೆ ಸದುತ್ತರ ಪಾಲಿಸಿದೆ I ತಪ್ಪನು ದಂಡಿಸಿದೆಯಾದರೂ ಕ್ಷಮಿಸುವ ದೇವನಾಗಿದ್ದೆ II</verse>
				<verse number="9">ಘನಪಡಿಸಿರೆಮ್ಮ ಸ್ವಾಮಿ ದೇವನನು I ಶ್ರೀಪರ್ವತದಲಿ ವಂದಿಸಿ ಆತನನು I ಪರಮಪವಿತ್ರನು ಆ ನಮ್ಮ ದೇವನು II</verse>
			</chapter>
			<chapter number="100">
				<verse number="1">ಭೂನಿವಾಸಿಗಳೇ, ಜಯಘೋಷ ಮಾಡಿ ಪ್ರಭುವಿಗೆ I</verse>
				<verse number="2">ಅತಿ ಸಂತೋಷದಿಂದ ಸೇವೆ ಮಾಡಿ ಆತನಿಗೆ I ಹಾಡುತ, ಪಾಡುತ, ಬನ್ನಿ ಆತನ ಸನ್ನಿಧಿಗೆ II</verse>
				<verse number="3">ಪ್ರಭುವೇ ದೇವರೆಂಬುದನು ಮರೆತುಬಿಡಬೇಡಿ ನೀವು I ನಮ್ಮ ಸೃಷ್ಟಿಕರ್ತ ಆತನು, ಆತನವರು ನಾವು I ಆತನ ಜನ, ಆತನೆ ಮೇಯಿಸುವ ಕುರಿಗಳು, ನಾವು II</verse>
				<verse number="4">ಆತನ ಗೃಹದ್ವಾರವನು ಪ್ರವೇಶಿಸಿ ಧನ್ಯವಾದದೊಂದಿಗೆ I ಆತನ ಆವರಣದಲಿ ನಿಲ್ಲಿರಿ ಸ್ತುತಿಸ್ತೋತ್ರಗಳೊಂದಿಗೆ I ಆತನ ನಾಮವನು ಕೊಂಡಾಡಿ ಉಪಕಾರಸ್ಮರಣೆಯೊಂದಿಗೆ II</verse>
				<verse number="5">ಹೌದು, ಪ್ರಭುವೆನಿತೋ ಒಳ್ಳೆಯವನು I ಇರುವುದಾತನ ಪ್ರೀತಿ ಯುಗಯುಗಕು I ಆತನ ಸತ್ಯತೆ ತಲತಲಾಂತರಕು II</verse>
			</chapter>
			<chapter number="101">
				<verse number="1">ಪ್ರೀತಿನೀತಿಗಳ ಕುರಿತು ಹಾಡುವೆನು I ಹೇ‍ ಪ್ರಭೂ, ನಿನ್ನನೆ ಹಾಡಿಹೊಗಳುವೆನು II</verse>
				<verse number="2">ಸನ್ಮಾರ್ಗದಲೇ ನಾ ನಡೆಯುವೆನು I ನನಗೆಂದು ನೀಡುವೆ ದರ್ಶನವನು? I ಮನೆಯೊಳಗೂ ಶುದ್ಧಹೃದಯಿ ನಾನು II</verse>
				<verse number="3">ನೀಚಕಾರ್ಯಗಳನು ನಾ ವೀಕ್ಷಿಸಲಾರೆ I ಅಧರ್ಮಿಗಳ ನಡೆಯನು ನಾ ಸಹಿಸಲಾರೆ I ಅಂಥವರ ಸಹವಾಸವನು ನಾ ತಾಳಲಾರೆ II</verse>
				<verse number="4">ನನ್ನ ಬಿಟ್ಟು ತೊಲಗಲಿ ಮೂರ್ಖತನ I ನನಗೆ ಹತ್ತದೆಯಿರಲಿ ಕೆಟ್ಟತನ II</verse>
				<verse number="5">ಸಂಹರಿಸುವೆನು ನೆರೆಯವನ ಮೇಲೆ ಅಪವಾದ ಹೊರಿಸುವವನನು I ಸಹಿಸಲಾರೆ ಸೊಕ್ಕಿದಕಣ್ಣು, ಕೊಬ್ಬಿದ ಮನ ಉಳ್ಳಂಥವನನು II</verse>
				<verse number="6">ಆರಿಸಿಕೊಳ್ವೆನು ನಾಡಿನ ಸಜ್ಜನರನು I ಇರಿಸಿಕೊಳ್ವೆನು ನನ್ನೊಡನೆ ವಾಸಿಸಲವರನು I ಸನ್ಮಾರ್ಗಿಯೆ ನನ್ನ ಸೇವಕನಾಗಿರುವನು II</verse>
				<verse number="7">ಮೋಸಗಾರನು ವಾಸಮಾಡನು ನನ್ನ ನಿವಾಸದಲಿ I ಸುಳ್ಳುಗಾರನು ನಿಲ್ಲಲಾರನು ನನ್ನ ಸಮ್ಮುಖದಲಿ II</verse>
				<verse number="8">ಇಲ್ಲಮಾಡುವೆನು ಕೆಡುಕರನು ಪ್ರಭುವಿನಾ ನಗರದೊಳಗೆ I ನಾಶಮಾಡುವೆನು ನಾಡಿನ ದುರುಳರನು ದಿನದಿನಗಳೊಳಗೆ II</verse>
			</chapter>
			<chapter number="102">
				<verse number="1">ಕಿವಿಗೊಡು ಪ್ರಭು, ನನ್ನ ಪ್ರಾರ್ಥನೆಗೆ I ನನ್ನ ಕೂಗು ಸೇರಲಿ ನಿನ್ನ ಬಳಿಗೆ II</verse>
				<verse number="2">ಕಷ್ಟಕಾಲದೊಳು ವಿಮುಖನಾಗಬೇಡ ನೀನೆನಗೆ I ಕಿವಿಗೊಡು, ಮೊರೆಯಿಡುವಾಗಲೆ, ಸದುತ್ತರಿಸು ಬೇಗನೆ II</verse>
				<verse number="3">ಮಾಯವಾಗುತ್ತಿದೆ ನನ್ನೀ ಜೀವಮಾನ ಹೊಗೆಯಂತೆ I ಉರಿಯುತ್ತಿವೆ ಎನ್ನೆಲುಬುಗಳು ಒಲೆಯಲ್ಲಿಟ್ಟ ಕೊರಡಿನಂತೆ II</verse>
				<verse number="4">ಬಿಸಿಲಿಗೆ ಬಾಡಿದ ಹುಲ್ಲಿನಂತಿದೆ ಎನ್ನೆದೆ I ತಿಂಡಿತೀರ್ಥವನುಣ್ಣಲೂ ನಾ ಮರೆತುಹೋದೆ II</verse>
				<verse number="5">ಕೂಗಿ ನಾ ನಿಟ್ಟುಸಿರಿಟ್ಟೆ I ಎಲುಬು ತೊಗಲು ಆಗಿಬಿಟ್ಟೆ II</verse>
				<verse number="6">ಅಡವಿಯ ರಣಹದ್ದಿಗೆ ಸಮನಾದೆ I ಹಾಳುರಿನ ಗೂಗೆಯ ಹಾಗಾದೆ II</verse>
				<verse number="7">ಮನೆಮೇಲಿನ ಒಂಟಿ ಪಕ್ಷಿಯಾದೆ I ಬಳಲುತ್ತಿರುವೆನು ನಿದ್ರೆಯಿಲ್ಲದೆ II</verse>
				<verse number="8">ವೈರಿಗಳು ದಿನವಿಡೀ ನನ್ನ ನಿಂದಿಸುತ್ತಿಹರು I ದ್ವೇಷಿಗಳು ನನ್ನ ಹೆಸರೆತ್ತಿ ಶಪಿಸುತ್ತಿಹರು II</verse>
				<verse number="9">ಬೂದಿಯೇ ನನಗೆ ಆಹಾರವಾಯಿತು I ಪಾನದಲಿ ಕಣ್ಣೀರು ಮಿಶ್ರವಾಯಿತು II</verse>
				<verse number="10">ನಿನ್ನ ಕೋಪತಾಪಗಳೆ ಕಾರಣ ಇದಕ್ಕೆಲ್ಲಾ I ನನ್ನನು ಮೇಲಕ್ಕೆತ್ತಿ ಬಿಸಾಡಿಬಿಟ್ಟಿರುವೆಯಲ್ಲಾ II</verse>
				<verse number="11">ನನ್ನ ಬಾಳು ಬೈಗಿನ ನೆರಳಂತೆ I ನಾನಿರುವೆ ಬಾಡಿದ ಹುಲ್ಲಿನಂತೆ II</verse>
				<verse number="12">ನೀನಾದರೋ ಪ್ರಭು, ಸದಾ ಸಿಂಹಾಸನಾರೂಢ I ಮಾಳ್ಪರು ತಲತಲಾಂತರಕು ನಿನ್ನ ನಾಮಸ್ಮರಣ II</verse>
				<verse number="13">ಎದ್ದು ಸಿಯೋನಿಗೆ ತೋರು ಸೌಜನ್ಯತೆ I ಅದಕ್ಕೆ ದಯೆತೋರಿಸುವ ಸಮಯವಿದೇ I ನಿಯಮಿತ ಕಾಲವಿದೋ ಬಂದುಬಿಟ್ಟಿದೆ II</verse>
				<verse number="14">ಕಲ್ಲುಕುಪ್ಪೆಯಾಗಿದ್ದರೂ ನಿನ್ನ ಭಕ್ತರಿಗದು ಪ್ರಿಯ I ಅದರ ವಿನಾಶವನು ಕಂಡು ಕರಗಿಹೋಗಿದೆ ಹೃದಯ II</verse>
				<verse number="15">ಹೆದರುವುವು ಪ್ರಭುವೆಂಬ ನಿನ್ನ ನಾಮಕೆ ಜನಾಂಗಗಳು I ಭಯಪಡುವರು ನಿನ್ನ ಪ್ರತಾಪಕೆ ಭೂರಾಜರುಗಳು II</verse>
				<verse number="16">ಏಕೆನೆ ಪುನರುದ್ಧರಿಸುವನು ಸಿಯೋನನು I ಪ್ರತ್ಯಕ್ಷಮಾಡುವನಾತ ತನ್ನ ಮಹಿಮೆಯನು II</verse>
				<verse number="17">ತಿರಸ್ಕರಿಸನಾತ ನಿರ್ಗತಿಕರ ಮೊರೆಯನು I ನೆರವೇರಿಸದೆ ಬಿಡನು ಅವರ ಕೋರಿಕೆಯನು II</verse>
				<verse number="18">ಮುಂದಣ ಸಂತತಿಗಿದು ಶಾಸನವಾಗಿರಲಿ I ಮುಂದೆ ಹುಟ್ಟುವ ಪ್ರಜೆ ಪ್ರಭುವನು ಹೊಗಳಲಿ II</verse>
				<verse number="19">ಭೂಲೋಕವನು ವೀಕ್ಷಿಸಿದನು ಪ್ರಭು ಪರಲೋಕದಿಂದ I ದೃಷ್ಟಿಸಿದನು ತನ್ನ ಉನ್ನತ ಪವಿತ್ರಸ್ಥಾನದಿಂದ II</verse>
				<verse number="20">ಆಲಿಸಿದಾತನು ಬಂಧಿತರ ಗೋಳಾಟವನು I ಬಿಡಿಸಿಹನು ಮರಣತೀರ್ಪಿಗೆ ಗುರಿಯಾದವರನು II</verse>
				<verse number="21">ಹೀಗೆ ಪ್ರಭುವಿಗಾರಾಧನೆ ಸಲ್ಲಿಸಲು I ಜನಾಂಗಗಳೂ ರಾಜ್ಯಗಳೂ ಕೂಡಿರಲು</verse>
				<verse number="22">ಹೊಗಳಲಾಗುವುದು ಪ್ರಭುವಿನ ನಾಮ ಸಿಯೋನಿನಲಿ I ಆತನ ಗುಣಗಾನವಿರುವುದು ಆ ಜೆರುಸಲೇಮಿನಲಿ II</verse>
				<verse number="23">ನಡುಹಾದಿಯಲೆ ಕುಂದಿಸಿಹನು ಪ್ರಭು ನನ್ನ ಬಲವನು I ಕಡಿಮೆಮಾಡಿಬಿಟ್ಟಿಹನು ಆತ ನನ್ನ ಆಯುಷ್ಯವನು II</verse>
				<verse number="24">ಎಂತಲೆ ನಾನು: “ಅರ್ಧಾಯುಷ್ಯದಲೆ ನನ್ನೊಯ್ಯಬೇಡ ದೇವಾ I ತಲತಲಾಂತರದವರೆಗೂ ನಿನ್ನ ವರುಷಗಳು ಉಳಿದಿವೆಯಲ್ಲಾ II</verse>
				<verse number="25">ಆದಿಯಲೆ ನೀ ಭುವಿಗೆ ಅಸ್ತಿವಾರ ಹಾಕಿದೆ I ಗಗನಮಂಡಲವು ಸಹ ನಿನ್ನ ಸೃಷ್ಟಿಯಾಗಿದೆ II</verse>
				<verse number="26">ನೀನಾದರೋ ಉಳಿದಿರುವೆ, ಅವೋ ಅಳಿದುಹೋಗುವುವು I ಹಳೆಯದಾಗುತ್ತವೆ ಬಟ್ಟೆಯಂತೆ ಅವೆಲ್ಲವು I ಉಡುಪಿನಂತೆ ಬದಲಿಸುತ್ತ, ಮಾರ್ಪಡುತ್ತವೆ ಅವು II</verse>
				<verse number="27">ನೀನಂತೂ ಬದಲಾಗದೆ ಇರುವೆಯಯ್ಯಾ I ನಿನ್ನ ವರುಷಗಳಿಗೆ ಮುಗಿವೇ ಇಲ್ಲವಯ್ಯಾ II</verse>
				<verse number="28">ಬಾಳುವರು ನಿನ್ನ ದಾಸರ ಮಕ್ಕಳು ಸುರಕ್ಷಿತವಾಗಿ I ಇರುವುದವರ ಸಂತತಿ ನಿನ್ನ ಸಮ್ಮುಖದಲಿ ಸ್ಥಿರವಾಗಿ II 7</verse>
			</chapter>
			<chapter number="103">
				<verse number="1">ಭಜಿಸು ನನ್ನ ಮನವೇ, ಭಜಿಸು ಪ್ರಭುವನು I ನನ್ನ ಅಂತರಂಗವೇ, ಭಜಿಸು ಆತನನು I ನೆನೆ ಆತನ ಪರಮಪಾವನ ನಾಮವನು II</verse>
				<verse number="2">ಭಜಿಸು ನನ್ನ ಮನವೇ, ಭಜಿಸು ಪ್ರಭುವನು I ಮರೆಯದಿರು ಆತನ ಉಪಕಾರಗಳೊಂದನು II</verse>
				<verse number="3">ಮನ್ನಿಸುವನಾತ ನನ್ನ ದೋಷಗಳನು I ವಾಸಿಮಾಡುವನು ನನ್ನ ರೋಗಗಳನು II</verse>
				<verse number="4">ಉಳಿಸುವನು ಪಾತಾಳದ ಕೂಪದಿಂದ ನನ್ನನು I ಮುಡಿಸುವನೆನಗೆ ದಯದಾಕ್ಷಿಣ್ಯದ ಮುಕುಟವನು II</verse>
				<verse number="5">ಒಳ್ಳೆಯವುಗಳಿಂದ ತುಂಬಿಸುವನು ನನ್ನ ಜೀವಮಾನವನು I ಪುನರುಜ್ಜೀವನಗೊಳಿಸುವನು ಗರುಡನಂತೆ ನನ್ನ ಯೌವನವನು II</verse>
				<verse number="6">ಸಾಧಿಸುವನು ಪ್ರಭು ನ್ಯಾಯನೀತಿಯನು I ದೊರಕಿಸುವನು ಶೋಷಿತರಿಗೆ ನ್ಯಾಯವನು II</verse>
				<verse number="7">ತೋರಿಸಿದಾತ ತನ್ನ ಮಾರ್ಗವನು ಮೋಶೆಗೆ I ತನ್ನ ಮಹತ್ಕಾರ್ಯಗಳನು ಇಸ್ರಯೇಲರಿಗೆ II</verse>
				<verse number="8">ಪ್ರಭು ದಯಾಳು, ಕೃಪಾಪೂರ್ಣನು I ಸಹನಶೀಲನು, ಪ್ರೀತಿಮಯನು II</verse>
				<verse number="9">ಆತನು ಸದಾ ತಪ್ಪು ಹುಡುಕುವವನಲ್ಲ I ನಿತ್ಯಕು ಕೋಪ ಇಟ್ಟುಕೊಳ್ಳುವವನಲ್ಲ II</verse>
				<verse number="10">ನಮ್ಮ ಪಾಪಗಳಿಗೆ ತಕ್ಕಂತೆ ಆತ ವರ್ತಿಸಲಿಲ್ಲ I ನಮ್ಮ ಅಪರಾಧಗಳಿಗೆ ತಕ್ಕಹಾಗೆ ದಂಡಿಸಲಿಲ್ಲ II</verse>
				<verse number="11">ಆಕಾಶಮಂಡಲವು ಭೂಮಿಯಿಂದೆಷ್ಟೋ ಉನ್ನತ I ದೈವಭಯವುಳ್ಳವರಿಗೆ ಆತನ ಕೃಪೆ ಅಷ್ಟೇ ಸನ್ನುತ II</verse>
				<verse number="12">ಪಡುವಣದಿಂದ ಮೂಡಣವೆಷ್ಟೋ ದೂರ I ದೂಡಿದನಾತ ನಮ್ಮ ಪಾಪಗಳನು ಅಷ್ಟು ದೂರ II</verse>
				<verse number="13">ತಂದೆ ಕರುಣೆ ತೋರಿಸುವಂತೆ ಮಕ್ಕಳಿಗೆ I ಕನಿಕರಿಸುವನಾತ ತನಗೆ ಅಂಜುವವರಿಗೆ II</verse>
				<verse number="14">ಏಕೆನೆ, ನಮ್ಮ ಸ್ವಭಾವವನು ಆತನು ಬಲ್ಲ I ನಾವು ಹುಡಿಮಣ್ಣೆಂದವನಿಗೆ ತಿಳಿದಿದೆಯಲ್ಲಾ II</verse>
				<verse number="15">ಮಾನವನ ಆಯುಷ್ಕಾಲ ಹುಲ್ಲಿಗೆ ಸಮಾನ I ಹೊಲದ ಹೂವಿನಂತೆ ಅವನ ಬೆಡಗು ಬಿನ್ನಾಣ II</verse>
				<verse number="16">ಬಿದ್ದುಹೋಗುವುದಾ ಹೂವು ಗಾಳಿಯ ಬಡಿತಕ್ಕೆ I ಅದರ ಗುರುತೂ ಇರದಲ್ಲಿ ಮರಳಿ ನೋಡಲಿಕ್ಕೆ II</verse>
				<verse number="17">ಭಯಭಕ್ತರಿಗೆ ಪ್ರಭುವಿನ ಪ್ರೀತಿಯಾದರೋ ಯುಗಯುಗಾಂತರಕು I ಅವರ ಮಕ್ಕಳ ಮಕ್ಕಳಿಗೆ ಆತನ ನೀತಿಯು ತಲತಲಾಂತರಕು II</verse>
				<verse number="18">ಅಂತೆಯೇ ಆತನ ನಿಬಂಧನೆಗಳನು ಕೈಗೊಳ್ಳುವವರಿಗೆ I ಆತನ ವಿಧಿನಿಯಮಗಳು ನೆನಪಿನಲ್ಲಿಟ್ಟು ನಡೆವವರಿಗೆ II</verse>
				<verse number="19">ಸ್ಥಾಪಿಸಿಹನು ಪ್ರಭು ಸ್ವರ್ಗದೊಳು ಸಿಂಹಾಸನವನು I ಎಲ್ಲದರ ಮೇಲೆ ನಡೆಸುತಿಹನು ರಾಜ್ಯಾಡಳಿತವನು II</verse>
				<verse number="20">ಭಜಿಸಿರಿ ಪ್ರಭುವನು ದೇವದೂತರುಗಳೇ I ಆತನ ಆಣತಿ ಪಾಲಿಪ ಪರಾಕ್ರಮಿಗಳೇ I ಆತನ ನುಡಿಯಂತೆಯೇ ನಡೆಯುವ ಜನಾಂಗಗಳೇ II</verse>
				<verse number="21">ಪ್ರಭುವನು ಭಜಿಸಿರಿ ಆತನ ಸೇನೆಗಳೇ I ಭಜಿಸಿ ಪ್ರಭುವನು, ಓ ಎನ್ನಮನವೇ II</verse>
				<verse number="22">ಭಜಿಸಿರಿ ಪ್ರಭುವನು ಆತನ ಸೃಷ್ಟಿಗಳೇ I ಆತನ ಅಧಿಕಾರದಲ್ಲಿಹ ಸಕಲ ವಸ್ತುಗಳೇ I ಭಜಿಸು ಪ್ರಭುವನು, ಓ ಎನ್ನಮನವೇ II</verse>
			</chapter>
			<chapter number="104">
				<verse number="1">ಭಜಿಸು ನನ್ನ ಮನವೇ, ಭಜಿಸು, ಪ್ರಭುವನು I ಪ್ರಭು, ನನ್ನ ದೇವಾ, ನೀ ಸರ್ವೋತ್ತಮನು I ಮಹಿಮೆ ಪ್ರತಾಪಗಳಿಂದ ಭೂಷಿತನು II</verse>
				<verse number="2">ತೊಟ್ಟುಕೊಂಡಿರುವೆ ಬೆಳಕನೇ ಬಟ್ಟೆಯಂತೆ I ಹರಡಿಸಿರುವೆ ಆಗಸವನು ಗುಡಾರದಂತೆ II</verse>
				<verse number="3">ನಿರ್ಮಿಸಿರುವೆ ನಿನ್ನ ಭವನವನು ಜಲದ ಮೇಲೆ I ಮಾಡುವೆ ಸಂಚಾರ ಮಾರುತನ ರೆಕ್ಕೆಗಳ ಮೇಲೆ I ನಿನಗೆ ರಥವಾಹನಗಳು ಆ ಮುಗಿಲು ಮೋಡಗಳೇ II</verse>
				<verse number="4">ಗಾಳಿಗಳೇ ನಿನಗೆ ದೂತರುಗಳು I ಅಗ್ನಿಜ್ಞಾಲೆಗಳೇ ಆಳುಗಳು II</verse>
				<verse number="5">ಬುವಿಯನು ತಳಹದಿಯ ಮೇಲೆ ಸ್ಥಾಪಿಸಿರುವೆ I ಅದೆಂದಿಗೂ ಕದಲದಂತೆ ಮಾಡಿರುವೆ II</verse>
				<verse number="6">ಅದಕ್ಕೆ ಹೊದಿಸಿರುವೆ ಸಾಗರವೆಂಬ ವಸ್ತ್ರವನು I ಆ ಜಲರಾಶಿಗಳು ಮುಳುಗಿಸಿವೆ ಬೆಟ್ಟಗಳನು II</verse>
				<verse number="7">ತಲೆದೋರಿತು ಜಲ ನಿನ್ನ ಗದರಿಕೆಗೆ I ಹೆದರಿ ಹಿಂಜರಿಯಿತು ನಿನ್ನ ಗರ್ಜನೆಗೆ II</verse>
				<verse number="8">ತಲೆದೋರಿದವು ಬೆಟ್ಟಗುಡ್ಡಗಳು I ತುಂಬಿಕೊಂಡವು ಹಳ್ಳಕೊಳ್ಳಗಳು I ಅವೇ ನೀ ನೇಮಿಸಿದ ಸ್ಥಳಗಳು II</verse>
				<verse number="9">ಗೊತ್ತುಮಾಡಿರುವೆ ಆ ಜಲರಾಶಿಗೆ ಮೇರೆಯನು I ಅವು ಮತ್ತೆ ಮುಚ್ಚದಂತೆ ಮಾಡಿರುವೆ ಭೂಮಿಯನು II</verse>
				<verse number="10">ಬುಗ್ಗೆಗಳು ಚಿಮ್ಮಿ ಓಡಮಾಡುವೆ ತಗ್ಗುಗಳಲಿ I ನದಿಗಳ ಹರಿಯಮಾಡುವೆ ಗುಡ್ಡಗಳ ನಡುವೆಯಲಿ II</verse>
				<verse number="11">ನೀರ ನೀಡುವವು ಕುಡಿಯಲಿಕ್ಕೆ ಕಾಡುಮೃಗಗಳಿಗೆ I ದಾಹ ನೀಗಿಸಿಕೊಳ್ಳಲು ಆ ಕಾಡುಕತ್ತೆಗಳಿಗೆ II</verse>
				<verse number="12">ಅವುಗಳ ಅರುಗಲ್ಲೇ ಇವೆ ಹಕ್ಕಿಗಳ ಗೂಡುಗಳು I ಕೇಳುತಿವೆ ಕೊಂಬೆಗಳಿಂದಾ ಪಕ್ಷಿಗಳ ಕಲರವಗಳು II</verse>
				<verse number="13">ಮಲೆಗಳ ಮೇಲೆ ಮಳೆಗರೆಯುವೆ ಗಗನದಿಂದ I ತೃಪ್ತಿಗೊಂಡಿದೆ ಪೃಥ್ವಿಯು ನಿನ್ನ ಕೃಪೆಗಳಿಂದ II</verse>
				<verse number="14">ಮೊಳೆಸುವೆ ಹುಲ್ಲನ್ನು ದನಕರುಗಳಿಗೋಸ್ಕರ I ಬೆಳೆಸುವೆ ಪೈರನು ನರಮಾನವರಿಗೋಸ್ಕರ II</verse>
				<verse number="15">ಒದಗಿಸುವೆ ಬೇಸಾಯದ ಆಹಾರವನು I ಹೃದಯವನು ಮುದಗೊಳಿಸುವ ದ್ರಾಕ್ಷಾರಸವನು I ಮುಖಕೆ ಮೆರಗನ್ನೀಯುವ ತಿಳಿತೈಲಗಳನು I ದೇಹವನು ಗಟ್ಟಿಮುಟ್ಟಾಗಿಸುವ ರೊಟ್ಟಿಯನು II</verse>
				<verse number="16">ಜಲವಿದೆ ಲೆಬನೋನಿನ ದೇವದಾರು ವೃಕ್ಷಗಳಿಗೆ I ನೀರು ಬೇಕಾದಷ್ಟಿದೆ ಪ್ರಭು ನೆಟ್ಟ ಮರಗಳಿಗೆ II</verse>
				<verse number="17">ಗೂಡುಕಟ್ಟಿಕೊಳ್ಳುವುವು ಹಕ್ಕಿಗಳಾ ಮರಗಳಲಿ I ವಾಸಮಾಡುವುವು ಕೊಕ್ಕರೆಗಳು ತುರಾಯಿಮರಗಳಲಿ II</verse>
				<verse number="18">ಬೆಟ್ಟಗುಡ್ಡಗಳಿವೆ ಕಾಡುಕುರಿಗಳಿಗೆ I ಬಂಡೆಬಿರುಕುಗಳಿವೆ ಬೆಟ್ಟದ ಮೊಲಗಳಿಗೆ II</verse>
				<verse number="19">ಋತು ಸೂಚನೆಗಾಗಿ ನೀ ನಿರ್ಮಿಸಿದೆ ಚಂದ್ರನನು I ಸೂರ್ಯ ಬಲ್ಲನು ತನ್ನಸ್ತಮಾನದ ವೇಳೆಯನು II</verse>
				<verse number="20">ರಾತ್ರಿಯಾಗುತ್ತದೆ ನೀ ಕತ್ತಲನು ಬರಮಾಡಲು I ತಿರುಗಾಡುತ್ತವೆ ಆಗ ಕಾಡಿನ ಜೀವಜಂತುಗಳು II</verse>
				<verse number="21">ಗರ್ಜಿಸುತ್ತವೆ ಪ್ರಾಯಸಿಂಹಗಳು ಬೇಟೆಗಾಗಿ I ದೇವರನ್ನು ಎದುರು ನೋಡುತ್ತವೆ ಆಹಾರಕ್ಕಾಗಿ II</verse>
				<verse number="22">ಮರಳುತ್ತವೆ ಸೂರ್ಯೋದಯವಾಗಲು I ತಂತಮ್ಮ ಗವಿಗುಹೆಗಳಲಿ ಮಲಗಲು II</verse>
				<verse number="23">ಹೊರಡುತ್ತಾನಾಗ ಮಾನವ ಕೆಲಸಕೆ I ದುಡಿಯುತ್ತಾನೆ ಸಾಯಂಕಾಲದವರೆಗೆ II</verse>
				<verse number="24">ಸೃಜಿಸಿರುವೆ ಎಲ್ಲವನು ಸುಜ್ಞಾನದಿಂದ I ಜಗವೆಲ್ಲ ತುಂಬಿದೆ ನಿನ್ನ ಸೃಷ್ಟಿಯಿಂದ II</verse>
				<verse number="25">ಸಮುದ್ರವಿದೊ ಎಷ್ಟು ಅಪಾರ, ಅದೆಷ್ಟು ವಿಶಾಲ I ಅದರಲ್ಲಿರುವ ಸಣ್ಣ-ದೊಡ್ಡ ಜೀವಿಗಳಿಗೆ ಲೆಕ್ಕವಿಲ್ಲ II</verse>
				<verse number="26">ಓಡಾಡುತ್ತವದರೊಳು ಹಡಗುಗಳು I ನೀನುಂಟುಮಾಡಿದ ತಿಮಿಂಗಿಲಗಳು II</verse>
				<verse number="27">ಸಕಾಲದಲೊದಗಿಸುವೆ ಆಹಾರವನು I ನಂಬಿಕೊಂಡಿವೆ ಆ ಜೀವಿಗಳು ನಿನ್ನನು II</verse>
				<verse number="28">ನೀ ನೀಡಲು ಕೂಡಿಸಿಟ್ಟುಕೊಳ್ಳುವುವು I ನೀ ಕೈತೆರೆಯಲು ಸಂತೃಪ್ತಿಪಡುವುವು II</verse>
				<verse number="29">ತಲ್ಲಣಗೊಳ್ಳುವುವು ನೀ ಮುಖ ಮರೆಮಾಡಿಕೊಳ್ಳಲು I ಮಣ್ಣುಪಾಲಾಗುವುವು ನೀನವುಗಳ ಉಸಿರನಡಗಿಸಲು II</verse>
				<verse number="30">ನೀ ಉಸಿರನ್ನೂದಲು ಹೊಸದಾಗುವುವು I ಪುನಶ್ಚೇತನಗೊಳ್ಳುವುದು ಜಗವೆಲ್ಲವು II</verse>
				<verse number="31">ಸ್ವಾಮಿದೇವನ ಮಹಿಮೆಯಿರಲಿ ಶಾಶ್ವತವಾಗಿ I ಆತ ಸಂತೋಷಿಸಲಿ ತನ್ನ ಸುಕೃತ್ಯಗಳಿಗಾಗಿ II</verse>
				<verse number="32">ನಡುಗುತ್ತದೆ ಭೂಮಂಡಲ ಆತನ ಕೃತ್ಯಕೆ I ಹೊಗೆಕಾರುತ್ತದೆ ಪರ್ವತ ಆತನ ಸ್ಪರ್ಶಕೆ II</verse>
				<verse number="33">ಪ್ರಭುವನು ನಾ ಹೊಗಳಿ ಹಾಡುವೆನು ಬಾಳಿನೊಳೆಲ್ಲ I ನನ್ನ ದೇವನನು ಭಜಿಸುವೆನು ನಾ ಜೀವಮಾನವೆಲ್ಲ II</verse>
				<verse number="34">ಆತನಿಗೊಲಿಯಲಿ ನನ್ನ ಧ್ಯಾನ I ಆತನಲೇ ಹರ್ಷಿಸಲಿ ನನ್ನ ಮನ II</verse>
				<verse number="35">ದಹಿಸಿಹೋಗಲಿ ಧರೆಯಿಂದ ದುಷ್ಟರು I ನಿರ್ಮೂಲವಾಗಲಿ ಸಕಲ ದುರುಳರು I ಪ್ರಭುವನು ನನ್ನ ಮನ ಸ್ತುತಿಸಲಿ I ಪ್ರಭುವಿಗೆ ಸ್ತುತಿಸ್ತೋತ್ರವಾಗಲಿ II</verse>
			</chapter>
			<chapter number="105">
				<verse number="1">ಸಲ್ಲಿಸಿ ಪ್ರಭುವಿಗೆ ಕೃತಜ್ಞತಾಸ್ತೋತ್ರವನು I ಮಾಡಿರಿ ಆತನ ನಾಮಸ್ಮರಣೆಯನು I ಸಾರಿರಿ ಜಗಕೆ ಆತನ ಸತ್ಕಾರ್ಯಗಳನು II</verse>
				<verse number="2">ಹಾಡಿ ಪಾಡಿ ಹೊಗಳಿರಿ ಪ್ರಭುವನು I ಧ್ಯಾನಿಸಿ ನೀವು ಆತನ ಪವಾಡಗಳನು II</verse>
				<verse number="3">ಹೆಮ್ಮೆಪಡಿ, ನೆನೆದಾತನ ಶ್ರೀನಾಮ I ಹಿಗ್ಗಲಿ ಹೃದಯ, ಕೋರಿ ಆತನ ದರ್ಶನ II</verse>
				<verse number="4">ಅರಸಿರಿ ಪ್ರಭುವನೂ ಆತನ ಶಕ್ತಿಯನೂ I ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು II</verse>
				<verse number="5">ಆತನ ದಾಸ ಅಬ್ರಹಾಮನ ಸಂತತಿಯವರೇ I ಆತನಾರಿಸಿಕೊಂಡ ಯಕೋಬನ ವಂಶದವರೇ II</verse>
				<verse number="6">ನೆನೆಯಿರಿ ಆತನದ್ಭುತಗಳನು, ಮಹತ್ಕಾರ್ಯಗಳನು I ಆತನ ವದನ ವಿಧಿಸಿದಾ ನ್ಯಾಯನಿರ್ಣಯಗಳನು II</verse>
				<verse number="7">ಪ್ರಭು ನಮ್ಮ ದೇವನೆಂಬುದು ಶ್ರುತ I ಆತನಿತ್ತ ತೀರ್ಪು ಇದೋ ವಿಶ್ವವ್ಯಾಪ್ತ II</verse>
				<verse number="8">ನೆನಪಿನಲ್ಲಿಡುವನು ಪ್ರಭು ತನ್ನ ವಾಗ್ದಾನವನು I ಸಾವಿರಾರು ತಲೆಗಳವರೆಗೂ ತನ್ನೊಪ್ಪಂದವನು II</verse>
				<verse number="9">ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು I ಇಸಾಕನಿಗೆ ಆಣೆಯಿಟ್ಟು ಆತ ಹೇಳಿದುದನು II</verse>
				<verse number="10">ಯಕೋಬನಿಗೆ ರಾಜಶಾಸನವಾಗಿ ಕೊಟ್ಟುದನು I ಇಸ್ರಯೇಲಿಗೆ ಶಾಶ್ವತವಾಗಿತ್ತ ಈ ಮಾತನು II</verse>
				<verse number="11">“ನಾ ಕೊಡುವೆನು ಕಾನಾನ್ ನಾಡನು ನಿಮಗೆ I ಸ್ವಾಸ್ತ್ಯವಾಗುವುದು ಅದು ನಿಮ್ಮ ಸಂತತಿಗೆ” II</verse>
				<verse number="12">ಅಲ್ಪಸಂಖ್ಯಾತರೂ ಆಗಂತುಕರೂ ಅವರಾಗಿರಲು I ನಾಡಿಂದ ನಾಡಿಗೆ ರಾಜ್ಯದಿಂದ ರಾಜ್ಯಕೆ ಅಲೆಯುತ್ತಿರಲು II</verse>
				<verse number="13"></verse>
				<verse number="14">ಅವರಿಗಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ I ಅವರಿಗಾಗಿ ಅರಸರನೂ ಗದರಿಸದೆ ಬಿಡಲಿಲ್ಲ: II</verse>
				<verse number="15">“ನಾನಭಿಷೇಕಿಸಿದವರನಿದೋ ಮುಟ್ಟಬೇಡಿ I ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿ” II</verse>
				<verse number="16">ತದನಂತರ ಬರಮಾಡಿದನಾ ನಾಡಿನಲಿ ಕ್ಷಾಮವನು I ಮುರಿದುಬಿಟ್ಟನು ಆಹಾರವೆಂಬಾ ಊರುಗೋಲನು II</verse>
				<verse number="17">ಕಳಿಸಿದ ಅವರಿಗೆ ಮುಂದಾಗಿ ಒಬ್ಬಾತನನು I ದಾಸತ್ವಕೆ ಮಾರಲಾದ ಆ ಜೋಸೆಫನನು II</verse>
				<verse number="18">ಅವನ ಕಾಲು ನೊಂದವು ಸಂಕೋಲೆಗಳಿಂದ I ಕುತ್ತಿಗೆ ಕೊರೆಯಿತು ಕಬ್ಬಿಣದ ಕೋಳಗಳಿಂದ II</verse>
				<verse number="19">ಕ್ರಮೇಣ ಕೈಗೂಡಿತು ಜೋಸೆಫನು ನುಡಿದದ್ದು I ಪ್ರಭುವಿನ ವಾಣಿ ಕಂಡುಬಂದಿತು ಸತ್ಯವೆಂದು II</verse>
				<verse number="20">ಬಿಡಿಸಲವನನು ಅರಸ ಕಳಿಸಿದ ಆಳನು I ಬಿಡುಗಡೆಮಾಡಿದ ಜನಾಧಿಪತಿ ಅವನನು II</verse>
				<verse number="21">ನೇಮಿಸಿದವನನು ತನ್ನ ಮನೆಗೆ ಯಜಮಾನನ್ನಾಗಿ I ಮಾಡಿದ ತನ್ನಾಸ್ತಿಗೆಲ್ಲಾ ಅಧಿಕಾರಿಯನ್ನಾಗಿ II</verse>
				<verse number="22">ಪದಾಧಿಕಾರಿಗಳಿಗೆ ಶಿಕ್ಷಕನನ್ನಾಗಿಸಿದ I ಮಂತ್ರಿಗಳಿಗೆಲ್ಲ ಉಪದೇಶಕನನ್ನಾಗಿಸಿದ II</verse>
				<verse number="23">ಬಂದನು ಆಗ ಇಸ್ರಯೇಲನು ಈಜಿಪ್ಟಿಗೆ I ಪ್ರವಾಸಿಯಾದ ಯಕೋಬನು ಹಾಮ ನಾಡಿಗೆ II</verse>
				<verse number="24">ತನ್ನ ಜನರ ಸಂತಾನವನು ಪ್ರಭು ಅಭಿವೃದ್ಧಿಗೊಳಿಸಿದ I ಶತ್ರುಗಳಿಗಿಂತಲೂ ಅವರನು ಬಲಿಷ್ಠರನ್ನಾಗಿಸಿದ II</verse>
				<verse number="25">ಮಾರ್ಪಡಿಸಿದ ಈಜಿಪ್ಟರನು ತನ್ನ ಜನರನು ದ್ವೇಷಿಸುವಂತೆ I ತನ್ನ ದಾಸರೊಡನವರು ಕುಯುಕ್ತಿಯಿಂದ ನಡೆದುಕೊಳ್ಳುವಂತೆ II</verse>
				<verse number="26">ಕಳಿಸಿದ ತನ್ನ ದಾಸ ಮೋಶೆಯನು I ತಾನು ಆರಿಸಿಕೊಂಡ ಆರೋನನನು II</verse>
				<verse number="27">ನೋಡಿದರಿವರು ಆತನ ಸೂಚಕಕಾರ್ಯಗಳನು I ಹಾಮ ನಾಡಿನಲಿ ನಾನಾ ಅದ್ಭುತಕಾರ್ಯಗಳನು II</verse>
				<verse number="28">ಕಾಳ ರಾತ್ರಿಯಾಯಿತು ಪ್ರಭು ಕಳಿಸಲು ಕತ್ತಲನು I ಈಜಿಪ್ಟರಾದರೊ ಇದಿರಿಸಿದರು ಆತನ ಮಾತನು II</verse>
				<verse number="29">ರಕ್ತವಾಗಿಸಿದನಾತ ಅವರ ನದಿಗಳನು I ಸಾಯಿಸಿದನು ಅವುಗಳಲಿದ್ದ ಮೀನುಗಳನು II</verse>
				<verse number="30">ತುಂಬಿಕೊಂಡವು ಕಪ್ಪೆಗಳು ನಾಡಿನೊಳೆಲ್ಲ I ಹರಡಿಕೊಂಡವು ಅರಸನ ಕೊಠಡಿಗಳಲೆಲ್ಲ II</verse>
				<verse number="31">ಕಾಣಿಸಿಕೊಂಡವು ಆತನಾಜ್ಞಾಪಿಸಲು I ಹುಳುಹುಪ್ಪಟೆಗಳು ಪ್ರಾಂತ್ಯದೆಲ್ಲೆಡೆಯೊಳು II</verse>
				<verse number="32">ಮಳೆಗೆ ಬದಲು ಕಳಿಸಿದ ಕಲ್ಮಳೆಯನು I ನಾಡಿನೆಲ್ಲೆಡೆಯೊಳು ಸಿಡಿಲುಮಿಂಚನು II</verse>
				<verse number="33">ನಾಶಮಾಡಿದ ನಾಡಿನ ಎಲ್ಲಾ ಮರವೃಕ್ಷಗಳನು I ದ್ರಾಕ್ಷಾಲತೆಗಳನ್ನು ಮೇಣ್ ಅಂಜೂರಗಿಡಗಳನು II</verse>
				<verse number="34">ಆತ ನುಡಿದದ್ದೇ, ಬಂದವು ಮಿಡತೆಗಳು I ಅಗಣಿತವಾದ ಸಂಖ್ಯೆಯಲಿ ಚಿಟ್ಟೆಹುಳುಗಳು II</verse>
				<verse number="35">ತಿಂದುಬಿಟ್ಟವವು ನಾಡಿನ ಬೆಳೆಯನು I ಹೊಲಗದ್ದೆಗಳು ಇತ್ತ ಫಲವೆಲ್ಲವನು II</verse>
				<verse number="36">ಕೊಂದನು ನಾಡಿನ ಜ್ಯೇಷ್ಠರೆಲ್ಲರನು I ಗಂಡಸುತನದಾ ಪ್ರಥಮ ಫಲಗಳನು II</verse>
				<verse number="37">ಹೊರತಂದನು ಇಸ್ರಯೇಲರನು ಬೆಳ್ಳಿಬಂಗಾರ ಸಹಿತ I ಅವರಾ ಗೋತ್ರದೊಳಿರಲಿಲ್ಲ ಯಾರೊಬ್ಬನೂ ನಿಶ್ಯಕ್ತ II</verse>
				<verse number="38">ಭೀತಿಯಿತ್ತಾ ಈಜಿಪ್ಟರಿಗೆ ಇಸ್ರಯೇಲರ ಬಗ್ಗೆ I ಈ ಕಾರಣ ಆನಂದಿಸಿದರು ಅವರು ಹೋದುದಕ್ಕೆ II</verse>
				<verse number="39">ಹಗಲೊಳು ಮೋಡವಿತ್ತನವರಿಗೆ ನೆರಳಿಗೋಸ್ಕರ I ಇರುಳೊಳು ಬೆಂಕಿಯಿತ್ತನವರಿಗೆ ಬೆಳಕಿಗೋಸ್ಕರ II</verse>
				<verse number="40">ಕೂಳನು ಕೇಳಿದಾಗ ಬರಮಾಡಿದನು ಲಾವಕ್ಕಿಗಳನು I ತೃಪ್ತಿಪಡಿಸಿದನು ಆಗಸದ ಆಹಾರಗಳಿಂದವರನು II</verse>
				<verse number="41">ಬಂಡೆಯನಾತ ಸೀಳಲು ನೀರು ಹರಿದು ಬಂದಿತು I ನಿರ್ಜಲ ಪ್ರದೇಶದಲದು ನದಿಯಾಗಿ ಹರಿಯಿತು II</verse>
				<verse number="42">ಸ್ಮರಿಸಿಕೊಂಡನು ಪ್ರಭು ತನ್ನ ವಾಗ್ದಾನವನು I ತನ್ನ ದಾಸ ಅಬ್ರಹಾಮನಿಗೆ ಕೊಟ್ಟಾ ಮಾತನು II</verse>
				<verse number="43">ಹೊರತಂದನು ತನ್ನ ಪ್ರಜೆಯನು ಉಲ್ಲಾಸದಿಂದ I ತಾನಾರಿಸಿಕೊಂಡವರನು ಹರ್ಷೋದ್ಗಾರದಿಂದ II</verse>
				<verse number="44">ಕೊಟ್ಟನವರಿಗೆ ಅನ್ಯರಾಷ್ಟ್ರಗಳ ನಾಡುಬೀಡನು I ಅವರ ಕೈವಶಮಾಡಿದನು ಅನ್ಯರ ಕಷ್ಟಾರ್ಜಿತವನು II</verse>
				<verse number="45">ತನ್ನ ವಿಧಿಗಳಂತೆ ನಡೆಯಲೆಂದೇ I ತನ್ನ ಶಾಸ್ತ್ರವನು ಅನುಸರಿಸಲೆಂದೇ I ಈ ಪರಿ ಮಾಡಿದಾ ಸ್ವಾಮಿಗೆ ವಂದನೆ II</verse>
			</chapter>
			<chapter number="106">
				<verse number="1">ಪ್ರಭು ದಯಾಪೂರಿತ, ಆತನ ಪ್ರೀತಿ ಶಾಶ್ವತ I ತೋರಿ ಆತನಿಗೆ ನಿಮ್ಮ ಸ್ತೋತ್ರ ಕೃತಜ್ಞತಾ II</verse>
				<verse number="2">ವರ್ಣಿಸಬಲ್ಲವನಾರು ಆತನ ಮಹತ್ಕಾರ್ಯಗಳನು? I ಯೋಗ್ಯರೀತಿಯಲಿ ಹೊಗಳಬಲ್ಲವರಾರು ಆತನನು? II</verse>
				<verse number="3">ನ್ಯಾಯದಂತೆ ನಡೆಯುವವರು ಧನ್ಯರು I ಅವಿರತವಾಗಿ ನೀತಿವಂತರು ಧನ್ಯರು II</verse>
				<verse number="4">ಮರೆಯಬೇಡೆನ್ನನು ಪ್ರಭು, ನಿನ್ನ ಪ್ರಜೆಗೆ ದಯೆತೋರುವಾಗ I ನೆರವು ನೀಡೆನಗೆ ಸ್ವಾಮಿ, ನೀನಾ ಜನರನು ಉದ್ಧರಿಸುವಾಗ II</verse>
				<verse number="5">ನೀನಾರಿಸಿಕೊಂಡಿರುವ ಪ್ರಗತಿಯನು ನಾ ಕಾಣಮಾಡು I ನಿನ್ನ ಜನಾಂಗದವರ ಸಂತಸವನು ನಾ ಸವಿಯಮಾಡು I ನಿನ್ನ ಸ್ವಕೀಯರ ಮಹಿಮೆಯಲ್ಲೆನಗೆ ಪಾಲನ್ನು ನೀಡು II</verse>
				<verse number="6">ನಮ್ಮ ಪಿತೃಗಳಂತೆಯೆ ಪಾಪಿಗಳು ನಾವು I ಅಕ್ರಮಗೈದೆವು, ಅಪರಾಧಿಗಳಾದೆವು II</verse>
				<verse number="7">ಗ್ರಹಿಸಲಿಲ್ಲಾ ಪಿತೃಗಳು ನಿನ್ನದ್ಭುತಗಳನು ಈಜಿಪ್ಟಿನಲಿ I ಸ್ಮರಿಸಲಿಲ್ಲವರು ನಿನ್ನಚಲ ಪ್ರೇಮಾತಿಶಯಗಳನು ಅಲ್ಲಿ I ಬದಲಿಗೆ ಮಹೋನ್ನತನನೆ ಪ್ರತಿಭಟಿಸಿದರು ಕೆಂಗಡಲಬಳಿ II</verse>
				<verse number="8">ಆದರೂ ತನ್ನ ನಾಮಪ್ರಯುಕ್ತ ರಕ್ಷಿಸಿದನವರನು I ಪ್ರಕಟಿಸಿದನಾತ ಹೀಗೆ ತನ್ನ ಶಕ್ತಿಸಾಮರ್ಥ್ಯವನು II</verse>
				<verse number="9">ಒಣಗಿಹೋಯಿತಾ ಕೆಂಗಡಲು ಆತನ ಗದರಿಕೆಗೆ I ದಾಟಿಸಿದನಾ ಸಾಗರವನು ಅಡವಿಯೋ ಎಂಬ ಹಾಗೆ II</verse>
				<verse number="10">ತಪ್ಪಿಸಿದನವರನು ವೈರಿಗಳ ಕೈಯಿಂದ I ರಕ್ಷಿಸಿದನು ಆ ಶತ್ರುಗಳ ಹಿಡಿತದಿಂದ II</verse>
				<verse number="11">ಮುಳುಗಿಸಿತು ಜಲರಾಶಿ ಆ ಶತ್ರುಗಳನು I ಉಳಿಯಗೊಡಿಸಲಿಲ್ಲ ಅವರಲ್ಲೊಬ್ಬನನು II</verse>
				<verse number="12">ಆಗ ನಂಬಿದರು ಪ್ರಭುವಿನಾ ಮಾತನು I ಮಾಡಿದರಾಗ ಆತನ ಗುಣಗಾನವನು II</verse>
				<verse number="13">ಆದರೆ ಮರೆತರು ಬೇಗನೆ ಆತನ ಸತ್ಕಾರ್ಯಗಳನು I ಕಾಯದೆ ಹೋದರು ಆತನಾ ಸಂಕಲ್ಪ ಸಾದನೆಯನು II</verse>
				<verse number="14">ಆಶಾಪಾಶಗಳಿಗೆ ಈಡಾದರು ಅಡವಿಯೊಳು I ದೇವನನೇ ಪರಿಶೋಧಿಸಿದರು ಅರಣ್ಯದೊಳು II</verse>
				<verse number="15">ಪೂರೈಸಿದನಾತ ಅವರ ಕೋರಿಕೆಯನು I ಕಳುಹಿಸಿದನಾದರೆ ಭೀಕರ ರೋಗವನು II</verse>
				<verse number="16">ಅಸೂಯೆಗೊಂಡರು ಪಾಳೆಯದೊಳು ಮೋಶೆಯ ಮೇಲೆ I ಪ್ರಭುವಿಗೆ ಪ್ರತಿಷ್ಠಿತನಾದ ಆ ಆರೋನನ ಮೇಲೆ II</verse>
				<verse number="17">ಭೂಮಿ ಬಾಯ್ದೆರೆದು ನುಂಗಿತು ದಾತಾನನನು I ಮುಚ್ಚಿಬಿಟ್ಟಿತು ಅಭಿರಾಮನ ಕಡೆಯವರನು II</verse>
				<verse number="18">ಆ ಜನರ ಮಧ್ಯದಲಿ ಬೆಂಕಿ ಹಬ್ಬಿತು I ಅಗ್ನಿಜ್ವಾಲೆ ದಹಿಸಿಬಿಟ್ಟಿತು ಆ ದುಷ್ಟರನು II</verse>
				<verse number="19">ಹೋರೇಬಿನಲಿ ಮಾಡಿದರು ಬಸವನನು I ಆರಾಧಿಸಿದರು ಆ ಎರಕದ ಶಿಲೆಯನು II</verse>
				<verse number="20">ಈಪರಿ ತೊರೆದುಬಿಟ್ಟರು ತಮ್ಮ ಮಹಿಮಾ ದೇವರನು I ಆರಿಸಕೊಂಡರು ಹುಲ್ಲು ತಿನ್ನುವ ಬಸವನ ವಿಗ್ರಹವನು II</verse>
				<verse number="21">ಮರೆತುಬಿಟ್ಟರವರು ತಮ್ಮ ಮುಕ್ತಿದಾತ ದೇವನನು I ಈಜಿಪ್ಟಿನಲ್ಲಾತ ಎಸಗಿದ ಮಹತ್ಕಾರ್ಯಗಳನು II</verse>
				<verse number="22">ಹಾಮನಾಡಿನಲಿ ಮಾಡಿದ ಅದ್ಭುತಗಳನು I ಕೆಂಗಡಲಬಳಿ ನಡೆದ ಘೋರ ಕೃತ್ಯಗಳನು II</verse>
				<verse number="23">ಎಂತಲೇ ‘ಸಂಹರಿಸುವೆ’ ಎನ್ನಲು ಪ್ರಭು ಅವರನು I ಆಪ್ತ ಮೋಶೆಯು ಮಧ್ಯಸ್ಥನಾಗಿ ಬಂದನು I ಸಂಹರಿಸದಂತೆ ಶಮನಗೊಳಿಸಿದನಾ ಕೋಪವನು II</verse>
				<verse number="24">ಅವರೊ ಬೇಡವೆಂದರು ಆ ಚೆಲುವಿನ ನಾಡನು I ನಂಬದೆ ಹೋದರು ಅವನಿತ್ತಾ ವಾಗ್ದಾನವನು II</verse>
				<verse number="25">ಗೊಣಗುಟ್ಟಿದರು ತಮ್ಮ ಗುಡಾರಗಳಲಿ I ನಂಬಿಕೆಯಿಡಲಿಲ್ಲ ಆತನ ಮಾತಿನಲಿ II</verse>
				<verse number="26">ಈ ಕಾರಣ ಆಣೆಯಿಟ್ಟನು ಕೈಯೆತ್ತಿ: I “ಬೀಳಮಾಡುವೆನು ನಿಮ್ಮನು ಅಡವಿಯಲಿ, II</verse>
				<verse number="27">ಚದರಿಸುವೆನು ನಿಮ್ಮ ಸಂತಾನವನು ಹೊರನಾಡುಗಳಲಿ I ಅಳಿದು ಹೋಗುವರವರು ಅನ್ಯಜನಾಂಗಗಳ ಮಧ್ಯೆಯಲಿ” I</verse>
				<verse number="28">ಬಾಳ್‍ಪೆಗೋರ ದೇವತೆಯ ಊಳಿಗದವರಾದರು I ಸತ್ತವರಿಗರ್ಪಿಸಿದ ಬಲಿಯನು ಉಣ್ಣುವವರಾದರು II</verse>
				<verse number="29">ಅವರಕ್ರಮ ನಡತೆ ಪ್ರಭುವನು ಕೆಣಕಿತು I ಭೀಕರ ವ್ಯಾಧಿ ಅವರ ಮಧ್ಯೆ ಹಬ್ಬಿತು II</verse>
				<verse number="30">ಫಿನೆಹಾಸನೆದ್ದು ದಂಡಿಸಿದೊಡನೆ I ನಿಂತುಹೋಯಿತು ಆ ಘೋರ ಬೇನೆ II</verse>
				<verse number="31">ಆತ ಮಾಡಿದಾ ನೈಪುಣ್ಯ I ಆಯಿತು ತಲಾಂತರಕು ಗಣ್ಯ II</verse>
				<verse number="32">ಮೆರಿಬಾ ನದಿಯ ಬಳಿ ರೇಗಿಸಿದರಾತನನು I ಹೀಗೆ ಬರಮಾಡಿದರು ಮೋಶೆಗೂ ಹಾನಿಯನು II</verse>
				<verse number="33">ನಿಂತರಾಗ ದೇವರಾತ್ಮನಿಗೆ ವಿರೋಧವಾಗಿ I ನುಡಿಯಬೇಕಾಯಿತು ಮೋಶೆಯು ಅವಿವೇಕವಾಗಿ II</verse>
				<verse number="34">ಅನುಸರಿಸಲಿಲ್ಲ ಅವರು ಪ್ರಭುವಿನಾಜ್ಞೆಯನು I ಆತ ಸಂಹರಿಸಲಿಲ್ಲ ಶೋಧಿಸಿದಾ ಜನರನು II</verse>
				<verse number="35">ಅನ್ಯಜನರೊಡನವರು ಕಲೆತು ಬೆರೆತುಹೋದರು I ಅವರ ದುರಾಚಾರಗಳನ್ನೂ ಕಲಿತುಕೊಂಡರು II</verse>
				<verse number="36">ಪೂಜೆಮಾಡಿದರು ಆ ಜನರ ವಿಗ್ರಹಗಳಿಗೆ I ಉರುಲಾದವು ಆ ವಿಗ್ರಹಗಳೆ ಅವರಿಗೆ II</verse>
				<verse number="37">ತಮ್ಮ ಪುತ್ರ ಪುತ್ರಿಯರನೇ ಅರ್ಪಿಸಿದರು I ದೆವ್ವಭೂತಗಳಿಗೆ ಅವರನು ಬಲಿಕೊಟ್ಟರು II</verse>
				<verse number="38">ಸುರಿಸಿದರು ತಮ್ಮ ಮಕ್ಕಳ ನಿರ್ದೋಷ ರಕ್ತವನು I ಬಲಿಕೊಟ್ಟರು ಕಾನಾನ್ಯರ ವಿಗ್ರಹಗಳಿಗೆ ಅವರನು I ಹೊಲೆಮಾಡಿದರಂಥ ಕೊಲೆಗಳಿಂದ ದೇಶವನು II</verse>
				<verse number="39">ಅಶುದ್ಧರಾದರವರು ತಮ್ಮ ದುಷ್ಕೃತ್ಯಗಳಿಂದ I ದೇವದ್ರೋಹಿಗಳಾದರು ದುರಾಚಾರಗಳಿಂದ II</verse>
				<verse number="40">ಕೆರಳಿತು ಕೋಪ ಆ ಜನರ ಮೇಲೆ ಪ್ರಭುವಿಗೆ I ತನ್ನವರಾ ನಡತೆ ಅಸಹ್ಯವಾಯಿತು ಆತನಿಗೆ II</verse>
				<verse number="41">ಎಂತಲೆ ಒಪ್ಪಿಸಿದನವರನು ಅನ್ಯರಾಷ್ಟ್ರಗಳ ಕೈಗೆ I ಹಗೆಮಾಡುತ್ತಿದ್ದವರೇ ಅಧಿಕಾರಿಗಳಾದರವರಿಗೆ II</verse>
				<verse number="42">ಗುರಿಯಾದರು ಶತ್ರುಶೋಷಣೆಗೆ I ಕುಗ್ಗಿಹೋದವರು ಅವರ ಕೈಕೆಳಗೆ II</verse>
				<verse number="43">ಪ್ರಭು ಪದೇಪದೇ ವಿಮುಕ್ತಗೊಳಿಸಿದನಾದರೂ I ಪರ್ಯಾಲೋಚಿಸದೆ ಪ್ರತಿಭಟನೆ ಮಾಡಿದರವರು I ಈ ಪರಿಯ ಅಕ್ರಮದ ನಿಮಿತ್ತ ಅವನತಿಗಿಳಿದರು II</verse>
				<verse number="44">ನೋಡಿದನಾತ ಅವರ ಕಷ್ಟಕಾರ್ಪಣ್ಯವನು I ಗಮನಿಸಿದನು ಅವರ ಆರ್ತನಾದವನು II</verse>
				<verse number="45">ನೆನಪಿಗೆ ತಂದುಕೊಂಡನು ತನ್ನೊಡಂಬಡಿಕೆಯನು I ದಯಾಳುತನದಿಂದ ತೋರಿದನವರಿಗೆ ಕರುಣೆಯನು I ಬಂಧಿಸಿದವರಿಂದಲೂ ದಯೆಯನು ದೊರಕಿಸಿದನು II</verse>
				<verse number="46"></verse>
				<verse number="47">ಹೇ ಪ್ರಭು, ನಮ್ಮ ದೇವಾ, ನಮ್ಮನ್ನುದ್ಧರಿಸು I ನಾಡುನಾಡುಗಳಿಂದ ನಮ್ಮನೊಂದುಗೂಡಿಸು I ನಿನ್ನ ಪವಿತ್ರ ನಾಮವನು ನಾವು ಭಜಿಸುವೆವು I ನಿನ್ನ ಸ್ತುತಿ ಸ್ತೋತ್ರಗಳಲಿ ಹೆಚ್ಚಳ ಪಡುವೆವು II</verse>
				<verse number="48">ಇಸ್ರಯೇಲಿನ ದೇವನಾದ ಪ್ರಭುವಿಗೆ ಸ್ತೋತ್ರ I ಅನಾದಿಯಿಂದ ಯುಗಯುಗಾಂತರಕು ಸ್ತೋತ್ರ I ಜನರೆಲ್ಲರು ಹೇಳಲಿ ‘ಆಮೆನ್’, ಪ್ರಭುವಿಗೆ ಸ್ತೋತ್ರ II</verse>
			</chapter>
			<chapter number="107">
				<verse number="1">ಕೃತಜ್ಞತೆಯಿಂದ ಸಲ್ಲಿಸಿರಿ ಪ್ರಭುವಿಗೆ ಸ್ತುತಿಯನು I ಆತನ ಪ್ರೀತಿ ಶಾಶ್ವತ, ಆತನು ಒಳ್ಳೆಯವನು II</verse>
				<verse number="2">ಸ್ತುತಿಸಲಿ ಆತನನು ವಿಮುಕ್ತಿ ಪಡೆದವರೆಲ್ಲರು I ಶತ್ರುಗಳಿಂದ ಬಿಡುಗಡೆ ಹೊಂದಿದವರೆಲ್ಲರು II</verse>
				<verse number="3">ಅಂತೆಯೇ ವಂದಿಸಲಿ ಬಂದವರು ಚತುರ್ದಿಕ್ಕುಗಳಿಂದ I ಒಂದಾಗಿ ಕೂಡಿಸಲ್ಪಟ್ಟವರೆಲ್ಲರು ನಾನಾ ದೇಶಗಳಿಂದ II</verse>
				<verse number="4">ಅಲೆದರು ಮರುಳುಗಾಡಿನಲಿ ದಾರಿಕಾಣದೆ I ಬಳಲಿದರು ಜನರಿರುವ ಊರು ಸಿಗದೆ II</verse>
				<verse number="5">ನರಳಿದರು ಹಸಿವೆ ಬಾಯಾರಿಕೆಯಿಂದ I ಸೊರಗಿದರು ಮನೋಯಾತನೆಯಿಂದ II</verse>
				<verse number="6">ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿಂದ ಬಿಡುಗಡೆಯಿತ್ತನು ಅವರಿಗೆ II</verse>
				<verse number="7">ಸರಿಯಾದ ದಾರಿಯಲಿ ನಡೆಸಿದನವರನು I ಸೇರಮಾಡಿದನು ಜನವಾಸಿಸುವ ಊರನು II</verse>
				<verse number="8">ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗೆ ಆತನೆಸಗಿದ ಅತಿಶಯಗಳನು II</verse>
				<verse number="9">ಬಾಯಾರಿದವರ ಆಸೆಯನ್ನಾತ ಪೂರೈಸಿದನು I ಹಸಿದವರನು ಮೃಷ್ಟಾನ್ನದಿಂದ ತೃಪ್ತಿಪಡಿಸಿದನು II</verse>
				<verse number="10">ದೇವರಾಜ್ಞೆಯನು ವಿರೋಧಿಸಿದ ಕಾರಣ I ಪರಾತ್ಪರನಾಜ್ಞೆಯನು ಹೀಗಳೆದ ಕಾರಣ II</verse>
				<verse number="11">ಕುಳಿತಿದ್ದರವರು ಕತ್ತಲಲಿ, ಕಗ್ಗತ್ತಲಲಿ I ನರಳುತ್ತಿದ್ದರು ಬಂಧಿತರಾಗಿ ಬೇಡಿಗಳಲಿ II</verse>
				<verse number="12">ಕರಗಿತ್ತವರ ಹೃದಯ ಕಡುಕಷ್ಟದಿಂದ I ಎಡವಿ ಬಿದ್ದಿದ್ದರು ಅಸಹಾಯತೆಯಿಂದ II</verse>
				<verse number="13">ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿನಿಂದ ಬಿಡುಗಡೆಯಿತ್ತನು ಅವರಿಗೆ II</verse>
				<verse number="14">ಕತ್ತಲು, ಕಗ್ಗತ್ತಲಿಂದವರನು ಹೊರತಂದನು I ಅವರ ಬೇಡಿಬಂಧನಗಳನು ಮುರಿದುಹಾಕಿದನು II</verse>
				<verse number="15">ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗಾತ ಎಸಗಿದ ಅತಿಶಯಗಳನು II</verse>
				<verse number="16">ಚೂರುಚೂರುಗೈದನು ಕಂಚಿನ ಕದಗಳನು I ಮುರಿದುಹಾಕಿದನು ಕಬ್ಬಿಣದ ಅಗುಳಿಗಳನು II</verse>
				<verse number="17">ರೋಗಿಗಳಾದರವರು ಅನಾಚಾರದ ನಿಮಿತ್ತ I ಬಾಧೆಗೊಳಗಾದರವರು ಪಾಪಕಾರ್ಯಗಳ ನಿಮಿತ್ತ II</verse>
				<verse number="18">ಅಸಹ್ಯಪಟ್ಟರು ಅನ್ನ ಆಹಾರಗಳಿಗೆ I ಹತ್ತಿರವಾದರವರು ಮೃತ್ಯುದ್ವಾರಕೆ II</verse>
				<verse number="19">ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿನಿಂದ ಬಿಡುಗಡೆಯಿತ್ತನು ಅವರಿಗೆ II</verse>
				<verse number="20">ಗುಣಪಡಿಸಿದನವರನು ತನ್ನ ವಾಣಿಯಿಂದ I ತಪ್ಪಿಸಿದನು ಅವರನು ವಿನಾಶಕೂಪದಿಂದ II</verse>
				<verse number="21">ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗಾತ ಎಸಗಿದ ಅತಿಶಯಗಳನು II</verse>
				<verse number="22">ಸಮರ್ಪಿಸಲಿ ಆತನಿಗೆ ಕೃತಜ್ಞತಾ ಬಲಿಗಳನು I ಹಾಡಿಹೊಗಳಲಿ ಆತನಾ ಮಹತ್ಕಾರ್ಯಗಳನು II</verse>
				<verse number="23">ಹಡಗನು ಹತ್ತಿ ಕಡಲನು ದಾಟಿದರು I ಸಾಗರ ಹಾಯ್ದು‍ವ್ಯಾಪಾರ ಗೈದರು II</verse>
				<verse number="24">ಕಂಡರು ಪ್ರಭುವಿನ ಪವಾಡಗಳನು I ಸಮುದ್ರದೊಳಾತನ ಅದ್ಭುತಗಳನು II</verse>
				<verse number="25">ಬಿರುಗಾಳಿಯೆದ್ದಿತು ಆತನಾಜ್ಞೆಯೊಂದಕ್ಕೆ I ತರಂಗಗಳು ಭೊರ್ಗರೆದವು ಅದರೊಂದಿಗೆ II</verse>
				<verse number="26">ಗಗನಕ್ಕೇರಿದರು, ಅಗಾಧಕ್ಕಿಳಿದರು I ಗಂಡಾಂತರಕೆ ಸಿಲುಕಿ ಕರಗಿಹೋದರು II</verse>
				<verse number="27">ಅಡ್ಡಾಡಿದರು, ಹೊಯ್ದಾಡಿದರು ಕುಡುಕರಂತೆ I ದಿಕ್ಕುತೋರದವರಾದರು ದಕ್ಷತೆ ಸಾಲದೆ II</verse>
				<verse number="28">ಸಂಕಟದಲಿ ಮೊರೆಯಿಟ್ಟರು ಪ್ರಭುವಿಗೆ I ಬಿಕ್ಕಟ್ಟಿಂದ ಬಿಡುಗಡೆಯಿತ್ತನು ಅವರಿಗೆ II</verse>
				<verse number="29">ಆ ಬಿರುಗಾಳಿಯನಾತ ಶಾಂತಪಡಿಸಿದ I ನಿಂತುಹೋಯಿತಾ ಸಮುದ್ರದಲೆಗಳ ಮೊರೆತ II</verse>
				<verse number="30">ತಂದಿತು ಪ್ರಶಾಂತತೆ ಸಂತಸವನವರಿಗೆ I ಮುಟ್ಟಿಸಿದನಾತ ಅವರಾಶಿಸಿದ ರೇವಿಗೆ II</verse>
				<verse number="31">ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗಾತ ಎಸಗಿದ ಅತಿಶಯಗಳನು II</verse>
				<verse number="32">ಕೀರ್ತಿಸಲಿ ಆತನನು ನೆರೆದ ಸಭೆಯಲಿ I ಹಾಡಿಹೊಗಳಲಿ ಹಿರಿಯರಾ ಕೂಟದಲಿ II</verse>
				<verse number="33">ನೀಚ ನಿವಾಸಿಗಳ ಕಾರಣದಿಂದ I ನದಿಗಳನೂ ಮರುಭೂಮಿಯಾಗಿಸಿದ II</verse>
				<verse number="34">ಒಣನೆಲವಾಗಿಸಿದನಾತ ಬುಗ್ಗೆಗಳನು I ಉಪ್ಪುನೆಲವಾಗಿಸಿದ ಫಲಭೂಮಿಯನು II</verse>
				<verse number="35">ಕೆರೆಯಾಗಿಸಿದಾ ಮರುಭೂಮಿಯನು I ಊಟೆಯಾಗಿಸಿದ ಆ ಒಣನೆಲವನು II</verse>
				<verse number="36">ಹಸಿದವರನು ನೆಲೆಗೊಳಿಸಿದನಲ್ಲಿ I ವಾಸಿಸಲು ನಗರವನು ಕಟ್ಟಿದರಲ್ಲಿ II</verse>
				<verse number="37">ಉತ್ತು ಬಿತ್ತಿದರು, ನೆಟ್ಟರು ದ್ರಾಕ್ಷಾಲತೆಯನು I ಕೂಡಿಸಿಕೊಂಡರು ಅಧಿಕವಾದ ಆದಾಯವನು II</verse>
				<verse number="38">ಅಭಿವೃದ್ಧಿಯಾದರು ಆತನಾಶೀರ್ವಾದದಿಂದಲೆ I ಅವರಿಗಿರಲಿಲ್ಲ ದನಕರುಗಳಾವುದರ ಕೊರತೆ II</verse>
				<verse number="39">ತದನಂತರ ಕುಗ್ಗಿತವರ ಅಂಕೆ ಸಂಖ್ಯೆ I ಕಷ್ಟಸಂಕಟ, ತಾಪತ್ರಯಗಳ ಮಧ್ಯೆ II</verse>
				<verse number="40">ತೃಣೀಕರಿಸಿದನು ಪ್ರಭು ಅವರಧಿಪತಿಗಳನು I ದಾರಿಯಿಲ್ಲದರಣ್ಯದೊಳು ಅಲೆದಾಡಿಸಿದನು II</verse>
				<verse number="41">ದೀನರನ್ನೇರಿಸಿದನು ಅವನತಿಯಿಂದ ಉನ್ನತಿಗೆ I ಹೆಚ್ಚಿಸಿದನವರ ಸಂತತಿಯನು ಕುರಿಮಂದೆ ಹಾಗೆ II</verse>
				<verse number="42">ಇದಕಂಡು ಹಿಗ್ಗುವರು ಸಜ್ಜನರೆಲ್ಲರು I ಬಾಯಿ ಮುಚ್ಚಿಕೊಳ್ಳುವರು ದುರ್ಜನರು II</verse>
				<verse number="43">ಪರ್ಯಾಲೋಚಿಸಲಿವುಗಳನು ಬುದ್ಧಿವಂತರು I ಗ್ರಹಿಸಲಿ ಪ್ರಭುವಿನಚಲ ಪ್ರೀತಿಯನಾ ಜನರು II</verse>
			</chapter>
			<chapter number="108">
				<verse number="1">ಸ್ಥಿರವಿದೆ ದೇವಾ, ಸುಸ್ಥಿರವಿದೆ ನನ್ನ ಮನ I ಹಾಡುತ ಪಾಡುತ ರಚಿಸುವೆನಿದೋ ಕವನ II</verse>
				<verse number="2">ಚೇತನಗೊಳ್ಳು, ಮನವೇ ಚೇತನಗೊಳ್ಳು I ಎಚ್ಚರಗೊಳ್ಳಲಿ ವೀಣೆ ತಂಬೂರಿಗಳು I ನಾನೆಬ್ಬಿಸುವೆನು ಬೆಳಗಿನ ಜಾವವನು II</verse>
				<verse number="3">ನಿನ್ನ ಸ್ತುತಿಸುವೆನು ಪ್ರಭು, ಜನಾಂಗಗಳ ಮುಂದೆ I ಸಂಕೀರ್ತಿಸುವೆನು ನಿನ್ನನು ರಾಷ್ಟ್ರಗಳ ಮಧ್ಯೆ II</verse>
				<verse number="4">ಮೀರಿದೆ ನಿನ್ನಚಲಪ್ರೀತಿ ಗಗನ ಮಂಡಲವನು I ಮುಚ್ಚಿದೆ ನಿನ್ನ ಸತ್ಯಸಂಧತೆ ಮೇಘರಾಶಿಯನು II</verse>
				<verse number="5">ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಶೋಭೆ I ಭೂಮಂಡಲದೊಳು ಹಬ್ಬಿ ಹರಡಲಿ ನಿನ್ನಾ ಪ್ರತಿಭೆ II</verse>
				<verse number="6">ನಿನಗೆ ಪ್ರಿಯರಾದ ನಮ್ಮ ಮೊರೆಯನಾಲಿಸು I ನಿನ್ನ ಭುಜಬಲದಿಂದ ನಮ್ಮನು ಜಯಗೊಳಿಸು II</verse>
				<verse number="7">ಗರ್ಭಗುಡಿಯಿಂದಲೆ ದೇವನಿಂತೆಂದನು: I “ಜಯಶೀಲ ನಾನು, ಹಂಚುವೆನು ಶೆಖೆಮನು I ಅಳೆದುಕೊಡುವೆನು ಸುಖೋತೆಂಬ ಬಯಲನು II</verse>
				<verse number="8">ಗಿಲ್ಯಾದ ಸೀಮೆ, ಮನಸ್ಸೆ ನಾಡು ನನ್ನವೆ I ಎಫ್ರಯಿಮ್ ಗೋತ್ರವು ಶಿರಸ್ತ್ರಾಣ ನನಗೆ I ಜೂದಕುಲ ರಾಜದಂಡವಾಗಿದೆ ನನ್ನ ಕೈಗೆ II</verse>
				<verse number="9">ಮೋವಾಬ್ ಪ್ರಾಂತ್ಯವು ನನ್ನ ಸ್ನಾನಪಾತ್ರೆಯು I ಎದೋಮ್ ಪ್ರಾಂತ್ಯವು ನನ್ನ ಕೆರಗಳಿಗೆ, ಎಡೆಯು I ನನ್ನ ಗೆಲ್ವೆನೆಂದಿತೆ ಫಿಲಿಷ್ಟಿಯ ಪ್ರಾಂತ್ಯವು?” II</verse>
				<verse number="10">ಕೋಟೆ ನಗರಕೆ ನನ್ನನು ಕರೆದೊಯ್ಯುವವರಾರು? I ಎದೋಮ್ ಪ್ರಾಂತ್ಯಕೆ ನನ್ನ ಕೊಂಡೊಯ್ಯುವವರಾರು? II</verse>
				<verse number="11">ದೇವಾ, ನೀ ನಮ್ಮನು ಕೈಬಿಟ್ಟಿರುವುದು ಸರಿಯೋ? I ನಮ್ಮ ಸೈನ್ಯಸಮೇತ ನೀ ಬರದೆ ಹೋದೆಯೋ? II</verse>
				<verse number="12">ಶತ್ರುವಿರುದ್ಧ ಸಹಾಯಮಾಡಯ್ಯಾ I ಮಾನವನ ನೆರವು ನಮಗೆ ಬರಡಯ್ಯಾ II</verse>
				<verse number="13">ನಮ್ಮ ಪರ ದೇವನಿರಲು ಹೆಣಗುವೆವು ಶೂರರಾಗಿ I ವೈರಿಗಳನು ತುಳಿದುಬಿಡುವನು ಆತ ಖರೆಯಾಗಿ II</verse>
			</chapter>
			<chapter number="109">
				<verse number="1">ಹೇ ದೇವಾ, ನೀ ಸ್ತುತಿಗೆ ಯೋಗ್ಯ I ನೀನು ಸುಮ್ಮನಿರುವುದು ಸರಿಯಾ? II</verse>
				<verse number="2">ತೆರೆದಿಹರು ಬಾಯಿ ದುರುಳರು, ವಂಚಕರು ನನಗೆದುರಾಗಿ I ಸುಳ್ಳು ನಾಲಿಗೆಗಳು ಆಡುತ್ತಿವೆ ನನಗೆ ವಿರುದ್ಧವಾಗಿ II</verse>
				<verse number="3">ಹಾಕಿಹರು ದ್ವೇಷತುಂಬಿದ ಮಾತುಗಳ ಮುತ್ತಿಗೆ I ನನ್ನ ಎದುರಿಸುತಿಹರು ನಿಷ್ಕಾರಣವಾಗಿಯೆ II</verse>
				<verse number="4">ಪ್ರೀತಿಗೆ ಪ್ರತಿಯಾಗಿ ಮಾಡುತಿಹರು ಆಪಾದನೆ I ಆದರೂ ಮಾಡುತ್ತಿರುವೆ ಅವರಿಗಾಗಿ ಪ್ರಾರ್ಥನೆ II</verse>
				<verse number="5">ಉಪಕಾರಕ್ಕೆ ಅಪಕಾರವನ್ನೆಸಗಿಹರು I ಗೆಳೆತನಕ್ಕೆ ಹಗೆತನವನ್ನೇ ತೋರಿಹರು II</verse>
				<verse number="6">ತಪ್ಪುಹೊರಿಸುವವನನು ನಿಲ್ಲಿಸು ಆ ಶತ್ರುವಿನ ಬಲಗಡೆಗೆ I ಗುರಿಪಡಿಸು ಅವನನು ಭ್ರಷ್ಟ ನ್ಯಾಯಾಧೀಶನ ತೀರ್ಪಿಗೆ II</verse>
				<verse number="7">ಅಪರಾಧಿಯಾಗಲಿ ಅವನು ನ್ಯಾಯವಿಚಾರಣೆಯಲಿ I ಅವನ ಪ್ರಾರ್ಥನೆಯೂ ಪಾಪವಾಗಿ ಎಣಿಸಲ್ಪಡಲಿ II</verse>
				<verse number="8">ಅಲ್ಪವಾಗಿರಲಿ ಅವನ ಜೀವನಾವಧಿ I ಮತ್ತೊಬ್ಬನದಾಗಲಿ ಅವನಾಸ್ತಿಪಾಸ್ತಿ II</verse>
				<verse number="9">ತಬ್ಬಲಿಗಳಾಗಲಿ ಅವನ ಮಕ್ಕಳುಮರಿ I ವಿಧವೆಯಾಗಲಿ ಅವನ ನಾರಿಮಣಿ II</verse>
				<verse number="10">ತಿರುಕರಂತೆ ಅಲೆಯಲಿ ಅವನ ಮಕ್ಕಳು ಭಿಕ್ಷೆಬೇಡುತ I ಹೊರದೂಡಲ್ಪಡಲಿ ತಮ್ಮ ಪಾಳುಬಿದ್ದಾಮನೆಗಳಿಂದ II</verse>
				<verse number="11">ಕಸಿದುಕೊಳ್ಳಲಿ ಅವನದೆಲ್ಲವನು ಸಾಲಿಗನು I ಸುಲಿದುಕೊಳ್ಳಲಿ ಪರರು ಅವನ ಕಷ್ಟಾರ್ಜಿತವನು II</verse>
				<verse number="12">ಕರುಣೆತೋರುವವನಾರೂ ಅವನಿಗಿಲ್ಲವಾಗಲಿ I ಅವನ ತಬ್ಬಲಿ ಮಕ್ಕಳನಾರೂ ಕನಿಕರಿಸದಿರಲಿ II</verse>
				<verse number="13">ನಿರ್ಮೂಲವಾಗಲಿ ಅವನಾ ಪೀಳಿಗೆ I ನಿರ್ನಾಮವಾಗಲಿ ಮರುವಂಶದೊಳಗೆ II</verse>
				<verse number="14">ಮರೆಯದಿರಲಿ ಪ್ರಭು ಅವನಾ ಹಿರಿಯರ ದೋಷವನು I ಪರಿಹರಿಸದಿರಲಿ ಅವನ ತಾಯಿಯು ಗೈದ ಪಾಪವನು II</verse>
				<verse number="15">ಅವರ ಪಾಪಗಳು ಪ್ರಭುವಿನ ನೆನಪಲ್ಲಿರಲಿ I ಅವನ ಹೆಸರೇ ಇಲ್ಲದಂತಾಗಲಿ ಧರೆಯಲಿ II</verse>
				<verse number="16">ಯಾರೊಬ್ಬನಿಗು ಮರುಕತೋರೆ ಮರೆತುಬಿಟ್ಟನವನು I ಕೊಲ್ಲಲು ಯತ್ನಿಸಿದನು ದೀನರನು, ಮನಗುಂದಿದವರನು II</verse>
				<verse number="17">ಅವನಿಗೆ ಪ್ರಿಯ ಶಪಿಸುವುದೆಂದರೆ, ಎರಗಲಿದೀಗ ಅವನ ಮೇಲೇ I ಆಶೀರ್ವದಿಸುವುದು ಅವನಿಗಪ್ರಿಯ, ಇರಲಿ ಅವನಿಗದು ದೂರದಲೇ II</verse>
				<verse number="18">ಶಪಿಸುವುದೆಂದರೆ ಅವನಿಗೆ ಉಡಿಗೆತೊಡಿಗೆಯಂತೆ I ಇಳಿಯಲಿ ಅದೀಗ ಅವನ ದೇಹಕೆ ನೀರಿನಂತೆ I ಸೇರಲಿ ಅದೀಗ ಅವನ ಕೀಲಿಗೆ ಎಣ್ಣೆಯಂತೆ II</verse>
				<verse number="19">ಅವನಿಗಿರಲಿ ಶಾಪ ಹೊದಿಕೆಯಂತೆ I ಅದುವೆ ಅನುದಿನದ ನಡುಗಟ್ಟಂತೆ II</verse>
				<verse number="20">ನನಗೆದುರಾಡಿ ತಪ್ಪು ಹೊರಿಸುವವರಿಗೆ I ಅದುವೇ ಪ್ರಭುವಿನಿಂದ ಗಿಟ್ಟುವ ಕೊಡುಗೆ II</verse>
				<verse number="21">ಹೇ ಪ್ರಭು, ದೇವಾ, ನನ್ನನಾದರಿಸು ಅಕ್ಕರೆಯಿಂದ I ನನ್ನ ಪಕ್ಷವಹಿಸಿ ರಕ್ಷಿಸು ನಿನ್ನ ನಾಮದ ಪ್ರಯುಕ್ತ II</verse>
				<verse number="22">ಬಡವ ನಾನು, ನನಗಿದೆ ಕುಂದುಕೊರತೆ I ನನ್ನ ಎದೆಗೆ ಅಲಗೇ ನಾಟಿದಂತಿದೆ II</verse>
				<verse number="23">ನಾ ಗತಿಸಿಹೋಗುತ್ತಿರುವೆ ಬೈಗಿನ ನೆರಳಂತೆ I ಬಿರುಗಾಳಿ ಕೊಂಡೊಯ್ಯುವ ಮಿಡತೆಯಂತೆ II</verse>
				<verse number="24">ಬಡಕಲಾಯಿತೆನ್ನ ದೇಹ ಬರಡಿಲ್ಲದೆ I ನಡುಕ ಹುಟ್ಟಿತು ಕಾಲಿಗೆ ತ್ರಾಣವಿಲ್ಲದೆ II</verse>
				<verse number="25">ಗುರಿಯಾಗಿರುವೆನು ನಾ ಜನರ ಅಪಹಾಸ್ಯಕ್ಕೆ I ನೋಡುವವರು ತಲೆಯಾಡಿಸಿ ಮಾಡುವ ನಿಂದೆಗೆ II</verse>
				<verse number="26">ಹೇ ಪ್ರಭೂ, ಹೇ ದೇವಾ, ನೆರವಾಗಯ್ಯಾ I ಅಚಲಪ್ರೀತಿಯಿಂದ ನನ್ನ ರಕ್ಷಿಸಯ್ಯಾ II</verse>
				<verse number="27">ನನ್ನ ರಕ್ಷಣೆ ನಿನ್ನ ಕೈಯಿಂದಾದುದೆಂದು ಅವರರಿಯಲಿ I ಅದು ನಿನ್ನಿಂದಲೇ ಹೇ ಪ್ರಭು, ಆದುದೆಂದು ಖಚಿತವಾಗಲಿ II</verse>
				<verse number="28">ಅವರೆನ್ನನು ಶಪಿಸಿದರೂ ನೀನೆನ್ನನು ಹರಸು I ನನ್ನೆದುರಾಳಿಗೆ ಅಪಮಾನವನು ಹೊರಿಸು I ನಿನ್ನ ದಾಸನೆನಗೆ ಆನಂದವನು ಪಾಲಿಸು II</verse>
				<verse number="29">ಮಾನಭಂಗವಾಗಲಿ ನನ್ನಾ ನಿಂದಕರಿಗೆ I ಬಟ್ಟೆಯಂತೆ ಅವರಿಗಂಟಿಕೊಳ್ಳಲಿ ಹೇಸಿಗೆ II</verse>
				<verse number="30">ಕೊಂಡಾಡುವೆನು ಪ್ರಭುವನು ಬಹಳವಾಗಿ I ಕೀರ್ತಿಸುವೆನು ಆತನನು ಸಾಮೂಹಿಕವಾಗಿ II</verse>
				<verse number="31">ನಿಂತಿರುವನು ಪ್ರಭು ಬಡವನ ಬಲಗಡೆ I ವಿಧಿಸುವವರಿಂದ ತಪ್ಪಿಸುವನು ಮರಣದಂಡನೆ II</verse>
			</chapter>
			<chapter number="110">
				<verse number="1">ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II</verse>
				<verse number="2">ಸಿಯೋನಿನ ಹೊರಗು ವಿಸ್ತರಿಸುವನು ಪ್ರಭು ನಿನ್ನ ರಾಜ್ಯದಾಳಿಕೆಯನು I ನಿನ್ನ ವೈರಿ ವಿರೋಧಿಗಳ ನಟ್ಟನಡುವೆಯೆ ದೊರೆತನ ಮಾಡುವೆ ನೀನು II</verse>
				<verse number="3">ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II</verse>
				<verse number="4">“ಮೆಲ್ಕಿಸೆದೆಕ್ ಪರಂಪರೆಯ ಯಾಜಕ ನೀ ನಿರುತ” I ಬದಲಿಸನು ಪ್ರಭು ತಾನಿತ್ತ ಪ್ರಮಾಣದೀ ಮಾತ II</verse>
				<verse number="5">ಬೆಂಬಲವಾಗಿ ನಿಂತಿಹನು ಪ್ರಭು ನಿನ್ನ ಹತ್ತಿರದಲೆ I ಸದೆಬಡಿವನು ಅರಸರನು ತನ್ನ ಪ್ರಕೋಪ ದಿನದಲೆ II</verse>
				<verse number="6">ನ್ಯಾಯತೀರಿಸುವನು ಪ್ರಭು ಸಕಲ ಜನಾಂಗಗಳಲಿ I ಛೇಧಿಸುವನು ಶತ್ರುಗಳ ಶಿರಸನು ರಣರಂಗದಲಿ I ತುಂಬಿಸುವನು ಹೆಣಗಳನು ಎಲ್ಲೆಡೆಗಳಲಿ II</verse>
				<verse number="7">ತೊರೆಯ ನೀರನು ಕುಡಿವನಾ ಒಡೆಯ I ತಲೆಯೆತ್ತಿ ನಡೆವನು ಗಳಿಸಿ ವಿಜಯ II</verse>
			</chapter>
			<chapter number="111">
				<verse number="1">	ಅಲ್ಲೆಲೂಯI ಸಜ್ಜನರ ಸಂಘದೊಳು, ಸಭಾಸದಸ್ಯರೊಳು ಕೂಡಿ I ಹೊಗಳುವೆ ಪ್ರಭುವನು ಮನಃಪೂರ್ವಕವಾಗಿ ಹಾಡಿ II</verse>
				<verse number="2">ಮಹತ್ತಾದವು ಪ್ರಭುವಿನಾ ಕಾರ್ಯಗಳು I ಕೊಂಡಾಡುವರು ಅವುಗಳನು ಭಕ್ತಾದಿಗಳು II</verse>
				<verse number="3">ಘನತೆ ಗೌರವವುಳ್ಳವು ಆತನ ಎಲ್ಲ ಕಾರ್ಯ I ನಿಲ್ಲುವುದು ಆತನ ನ್ಯಾಯನೀತಿಯು ನಿತ್ಯ II</verse>
				<verse number="4">ಆತನ ಅದ್ಭುತಕಾರ್ಯ ಸ್ಮರಣೀಯ I ಕರುಣಾವಂತ ಪ್ರಭು, ಪ್ರೀತಿಮಯ II</verse>
				<verse number="5">ಆಹಾರವನೀಯುವನು ಭಯಭಕ್ತಿಯುಳ್ಳವರಿಗೆ I ತನ್ನೊಡಂಬಡಿಕೆಯ ಚಿರ ನೆನಪಿರುವುದು ಆತನಿಗೆ II</verse>
				<verse number="6">ತನ್ನ ಪ್ರಜೆಗಿತ್ತಿಹನು ಅನ್ಯಜನರ ಸೊತ್ತನು I ತೋರ್ಪಡಿಸಿಹನು ಈ ಪರಿ ತನ್ನ ಸಾಮರ್ಥ್ಯವನು II</verse>
				<verse number="7">ನೀತಿ ಸತ್ಯತೆಯುಳ್ಳವು ಆತನ ಸತ್ಕಾರ್ಯಗಳು I ಸುಸ್ಥಿರವಾದವು ಆತನ ನಿಯಮ ನಿಬಂಧನೆಗಳು II</verse>
				<verse number="8">ಯುಗಯುಗಾಂತರಕು ದೃಢವಾಗಿರುವುವು I ಸತ್ಯನೀತಿಗಳು ಅವುಗಳಿಗೆ ಅಡಿಪಾಯವು II</verse>
				<verse number="9">ವಿಮೋಚನೆಯನಿತ್ತಿಹನು ಪ್ರಭು ತನ್ನ ಪ್ರಜೆಗೆ I ಸ್ಥಿರಸ್ಥಾಪಿತವಾಗಿಹುದು ಆತನ ಒಡಂಬಡಿಕೆ I ಪರಿಶುದ್ಧ, ಪರಮಪೂಜ್ಯ ಆತನ ನಾಮಾಂಕೆ II</verse>
				<verse number="10">ಸುಜ್ಞಾನಕ್ಕೆ ಮೂಲವು ದೈವಭಯವು I ಅದರ ಪಾಲನೆಯು ವಿವೇಕತನವು I ಪ್ರಭುವಿಗೆ ಸ್ತೋತ್ರ ಸದಾಕಾಲವು II</verse>
			</chapter>
			<chapter number="112">
				<verse number="1">	ಅಲ್ಲೆಲೂಯ I ಪ್ರಭುವಿನಲಿ ಭಯಭಕ್ತಿ ಉಳ್ಳವನು ಧನ್ಯನು I ಆತನಾಜ್ಞೆಗಳಲಿ ಹಿಗ್ಗುವವನು ಭಾಗ್ಯನು II</verse>
				<verse number="2">ಬಲಿಷ್ಠವಾಗುವುದು ಜಗದೊಳು ಅವನ ಸಂತಾನ I ಸಜ್ಜನರ ಸಂತತಿ ಪಡೆವುದು ಆಶೀರ್ವಚನ II</verse>
				<verse number="3">ಸಿರಿಸಂಪತ್ತಿರುವುದವನ ಮನೆಯಲಿ ಸಮೃದ್ಧಿಯಾಗಿ I ನೀತಿ ಫಲಿಸುವುದು ಆತನ ಮನದಲಿ ಶಾಶ್ವತವಾಗಿ II</verse>
				<verse number="4">ಸಜ್ಜನನಿಗೆ ಮೂಡುವುದು ಜ್ಯೋತಿ ಕತ್ತಲೊಳು I ನ್ಯಾಯಪ್ರಿಯನು ಆತ, ದಯಾವಂತ, ಕೃಪಾಳು II</verse>
				<verse number="5">ದಯೆತೋರಿ ಧನಸಹಾಯ ಮಾಡುವವನು ಭಾಗ್ಯವಂತ I ನ್ಯಾಯದಿಂದ ವ್ಯವಹರಿಸುವಂಥಾ ಮನುಜನು ಭಾಗ್ಯವಂತ II</verse>
				<verse number="6">ಅಚಲನಾಗಿರುವನು ನೀತಿವಂತನು I ಮರೆಯಲಾರರು ಎಂದಿಗೂ ಆತನನು II</verse>
				<verse number="7">ಅಶುಭವಾರ್ತೆಯ ಭಯಭೀತಿ ಯಾವುದೂ ಅವನಿಗಿಲ್ಲ I ಪ್ರಭುವಿನಲಿ ಭರವಸೆಯಿಟ್ಟ ಆ ಮನವು ಅಸ್ಥಿರವಲ್ಲ II</verse>
				<verse number="8">ದೃಢವಿದೆ ಅವನ ಮನ, ಎದೆಗುಂದನವನು I ಕಾಣುವನು ದುರುಳರಿಗಾಗುವ ದಂಡನೆಯನು II</verse>
				<verse number="9">ಉದಾರತೆಯಿಂದ ಕೊಡುವನು ಬಡವರಿಗೆ I ಫಲಿಸುವುದು ಅವನಾ ನೀತಿ ಸದಾಕಾಲಕೆ I ಮಹಿಮೆತರುವ ಕೋಡುಮೂಡುವುದು ಅವನಿಗೆ II</verse>
				<verse number="10">ಇದನು ಕಂಡು ಕೆರಳುವನಾ ದುರುಳನು I ಹೊಂದುವನು ಈ ಪರಿ ಆಶಾಭಂಗವನು I ಹಲ್ಲು ಕಡಿಯುತ ಅವನು ಹಾಳಾಗುವನು II</verse>
			</chapter>
			<chapter number="113">
				<verse number="1">	ಅಲ್ಲೆಲೂಯ I ಪ್ರಭುವಿನ ದಾಸರೇ, ಸ್ತುತಿಮಾಡಿ I ಪ್ರಭುವಿನ ನಾಮಸ್ತುತಿಯನು ಮಾಡಿ II</verse>
				<verse number="2">ಪ್ರಭುವಿನ ಸಿರಿನಾಮವು ಪೂಜ್ಯ I ಇಂದಿಗೂ ಎಂದೆಂದಿಗೂ ಪೂಜ್ಯ II</verse>
				<verse number="3">ಪ್ರಭುವಿನಾ ಸಿರಿನಾಮವು ಸ್ತುತ್ಯ I ಪೂರ್ವ ಪಶ್ಚಿಮದವರೆಗೂ ಸ್ತುತ್ಯ II</verse>
				<verse number="4">ಸಕಲ ಜಾತಿಜನಾಂಗಗಳಲಿ ಪ್ರಭು ಶ್ರೇಷ್ಠ I ಆತನ ಮಹಿಮೆ ಗಗನಕ್ಕಿಂತಲೂ ಉತ್ಕೃಷ್ಟ II</verse>
				<verse number="5">ನಮ್ಮ ಪ್ರಭು ದೇವನಂತೆ ಯಾರು ಸಮರ್ಥ I ಉನ್ನತದಲಿ ಆಸನಾರೂಢನು ಆತ I ಇಹಪರಗಳನು ವೀಕ್ಷಿಸಲಾತ ಶಕ್ತ II</verse>
				<verse number="6"></verse>
				<verse number="7">ದೀನರನು ಎಬ್ಬಿಸುವನು ಧೂಳಿನಿಂದ I ಬಡವರನು ಎತ್ತುವನು ತಿಪ್ಪೆಯಿಂದ II</verse>
				<verse number="8">ಕೂರಿಸುವನಾತ ಅವರನು ಅಧಿಪತಿಗಳ ನಡುವೆ I ತನ್ನ ಪ್ರಜೆಯನಾಳುವಾ ಅಧಿಪತಿಗಳ ನಡುವೆ II</verse>
				<verse number="9">ಬಂಜೆಯಾದವಳನು ಮಕ್ಕಳ ತಾಯಾಗಿಸುವನು I ಆನಂದದಿಂದಾಕೆ ಬೆಳಗಿಸುವಳಾ ಮನೆಯನು II</verse>
			</chapter>
			<chapter number="114">
				<verse number="1">ಇಸ್ರಯೇಲ್ ಜನರು ಈಜಿಪ್ಟನು ಬಿಟ್ಟು ಹೊರಟಾಗ I ಯಕೋಬ್ಯರು ಪರ ನುಡಿಯಾಡುವರನು ಬಿಟ್ಟಗಲಿದಾಗ, II</verse>
				<verse number="2">ಜುದೇಯ ಆಯಿತಾತನಿಗೆ ದೇವಾಲಯ I ಇಸ್ರಯೇಲ್ ಆಯಿತಾತನಿಗೆ ಸ್ವರಾಜ್ಯ II</verse>
				<verse number="3">ಇದ ಕಂಡು ಓಡಿಹೋಯಿತು ಕಡಲು I ಮರಳಿ ಬಂದಿತು ಜೋರ್ಡಾನ್ ಹೊನಲು II</verse>
				<verse number="4">ಕುಪ್ಪಳಿಸಿದವು ಪರ್ವತಗಳು ಟಗರುಗಳಂತೆ I ಕುಣಿದವು ಬೆಟ್ಟಗುಡ್ಡಗಳು ಕುರಿಮರಿಗಳಂತೆ II</verse>
				<verse number="5">ಕಡಲೇ, ಓಡುತ್ತಿರುವೆ ಏಕೆ? I ಜೋರ್ಡನ್, ಮರಳುತಿರುವೆ ಏಕೆ? II</verse>
				<verse number="6">ಪರ್ವತಗಳೇ, ಕುಪ್ಪಳಿಸಿದಿರೇಕೆ ಟಗರುಗಳಂತೆ? I ಬೆಟ್ಟಗುಡ್ಡಗಳೇ, ಕುಣಿದಿರೇಕೆ ಕುರಿಮರಿಗಳಂತೆ? II</verse>
				<verse number="7">ನಡುಗು ಭೂಲೋಕವೇ, ಪ್ರಭುವಿನ ಮುಂದೆ I ನಡುನಡುಗು ಯಕೋಬ ದೇವರ ಮುಂದೆ II</verse>
				<verse number="8">ಮಾರ್ಪಡಿಸಿಹನು ಗೋರ್ಕಲ್ಲನು ಕೊಳವಾಗಿ I ಕಲ್ಲು ಬಂಡೆಯನು ನೀರಿನ ಬುಗ್ಗೆಯಾಗಿ II</verse>
			</chapter>
			<chapter number="115">
				<verse number="1">ನಮಗಲ್ಲ ಹೇ ಪ್ರಭು, ನಮಗಲ್ಲ ಮಹಿಮೆ I ನಿನ್ನ ನಾಮಕೇ ಸಲ್ಲಲಿ ಆ ಮಹಿಮೆ I ನಿನ್ನ ನೀತಿ ಸತ್ಯತೆಗಳ ನಿಮಿತ್ತವೆ II</verse>
				<verse number="2">ಅನ್ಯಜನರು ನುಡಿಯುವುದೆಂತು: I “ಅವರ ದೇವರೆಲ್ಲಿ?” ಎಂದು II</verse>
				<verse number="3">ಪರದಲ್ಲಿಹನು ನಮ್ಮ ದೇವನು I ಗೈವನು ತನಗಿಷ್ಟ ಬಂದುದನು II</verse>
				<verse number="4">ಅವರ ವಿಗ್ರಹ ಬರೀ ಬೆಳ್ಳಿ ಬಂಗಾರ I ಅವು ಮಾನವನ ಕೈ ಕೆಲಸಗಳು ಮಾತ್ರ II</verse>
				<verse number="5">ಬಾಯಿದ್ದರೂ ಅವು ಮಾತಾಡುವುದಿಲ್ಲ I ಕಣ್ಣುಗಳಿದ್ದರೂ ಅವು ಕಾಣುವುದಿಲ್ಲ II</verse>
				<verse number="6">ಕಿವಿಯಿದ್ದರೂ ಅವು ಕೇಳುವುದಿಲ್ಲ I ಮೂಗಿದ್ದರೂ ಅವು ಮೂಸುವುದಿಲ್ಲ I ಗಂಟಲೊಳು ಅವಕೆ ಶಬ್ದವೇ ಇಲ್ಲ II</verse>
				<verse number="7">ಕೈಯಿದ್ದರೂ ಅವು ಮುಟ್ಟುವುದಿಲ್ಲ I ಕಾಲಿದ್ದರೂ ಅವು ನಡೆಯುವುದಿಲ್ಲ II</verse>
				<verse number="8">ಅವುಗಳಂತಾಗುವರು ಅವುಗಳನು ಮಾಡುವವರು I ಅವುಗಳಂತಾಗುವರು ಅವುಗಳನು ನಂಬುವವರು II</verse>
				<verse number="9">ಪ್ರಭುವಿನಲ್ಲಿದೆ ಭರವಸೆ ಇಸ್ರಯೇಲ್ ಜನರಿಗೆ I ಆತನೇ ಸಹಾಯಕ, ರಕ್ಷಾಕವಚ ಅವರಿಗೆ II</verse>
				<verse number="10">ಪ್ರಭುವಿನಲ್ಲಿದೆ ಭರವಸೆ ಆರೋನನ ಕುಲಕೆ I ಆತನೇ ಸಹಾಯಕ, ರಕ್ಷಾಕವಚ ಅವರಿಗೆ II</verse>
				<verse number="11">ಪ್ರಭುವಿನಲ್ಲಿದೆ ಭರವಸೆ ಆತನ ಭಕ್ತಜನರಿಗೆ I ಆತನೇ ಸಹಾಯಕ, ರಕ್ಷಾಕವಚ ಅವರಿಗೆ II</verse>
				<verse number="12">ಆಶೀರ್ವದಿಸುವನು ಪ್ರಭು ಮರೆಯದೆ ನಮ್ಮನು I ಇಸ್ರಯೇಲ್ ವಂಶವನು, ಆರೋನನ ಕುಲವನು II</verse>
				<verse number="13">ಆಶೀರ್ವದಿಸುವನು ಪ್ರಭು ತನ್ನಲಿ ಭಯಭಕ್ತಿಯುಳ್ಳವರನು I ಚಿಕ್ಕವರು ದೊಡ್ಡವರೆನ್ನದೆ ಭಯಭಕ್ತಿಯುಳ್ಳವರನು II</verse>
				<verse number="14">ವೃದ್ಧಿಗೊಳಿಸಲಿ ಪ್ರಭುವು ನಿಮ್ಮನು I ವೃದ್ಧಿಗೊಳಿಸಲಿ ನಿಮ್ಮ ಮಕ್ಕಳನು II</verse>
				<verse number="15">ಇಹಪರಗಳನು ಉಂಟುಮಾಡಿದ ಪ್ರಭುವಿಂದ I ಲಭಿಸುವಂತಾಗಲಿ ನಿಮಗೆ ಆಶೀರ್ವಾದ II</verse>
				<verse number="16">ಪ್ರಭುವಿಗೆ ಸ್ವಂತವಾದುದು ಪರಲೋಕ I ನರರಿಗೆ ಕೊಟ್ಟಿಹನಾತನು ಭೂಲೋಕ II</verse>
				<verse number="17">ಸ್ತುತಿಸುವುದಿಲ್ಲ ಸತ್ತವರಾರೂ ಪ್ರಭುವನು I ಕೀರ್ತಿಸರು ಪಾತಾಳಕ್ಕಿಳಿವವರು ಆತನನು II</verse>
				<verse number="18">ನಾವಾದರೋ ಪ್ರಭುವನು ಹೊಗಳಿ ಹಾಡುವೆವು I ಇಂದಿಗೂ ಎಂದೆಂದಿಗೂ ಹೊಗಳಿ ಹಾಡುವೆವು II ಅಲ್ಲೆಲೂಯ.</verse>
			</chapter>
			<chapter number="116">
				<verse number="1">ನನಗಿದೆ ಪ್ರಭುವಿನಲ್ಲಿ ಪ್ರೀತಿ I ಆಲಿಸಿಹನಾತ ನನ್ನ ವಿನಂತಿ II</verse>
				<verse number="2">ಆತನೆನ್ನ ಮೊರೆಗೆ ಕಿವಿಗೊಟ್ಟ ನಿಮಿತ್ತ I ವಿಜ್ಞಾಪಿಸುವೆ ಜೀವಮಾನ ಪರಿಯಂತ II</verse>
				<verse number="3">ಸುತ್ತುಕೊಂಡಿದ್ದವೆನ್ನನು ಮೃತ್ಯುಪಾಶಗಳು I ಬಿಗಿಹಿಡಿದಿದ್ದವು ಪಾತಾಳ ವೇದನೆಗಳು I ಬಂದೊದಗಿದ್ದವೆನಗೆ ಕಷ್ಟಸಂಕಟಗಳು II</verse>
				<verse number="4">ಕೂಗಿ ಕರೆದೆನಾಗ ಪ್ರಭುವಿನ ಸಿರಿ ನಾಮವನು I “ಪ್ರಭು, ಉಳಿಸೆನ್ನ ಪ್ರಾಣವನು” ಎಂದು ಬೇಡಿದೆನು II</verse>
				<verse number="5">ಪ್ರಭು ಕೃಪಾಳು, ನ್ಯಾಯಪ್ರಿಯನು I ಕರುಣಾಮಯನು, ನಮ್ಮ ದೇವನು II</verse>
				<verse number="6">ಕಾಪಾಡುವನು ಪ್ರಭು ಸರಳ ಜೀವಿಗಳನು I ರಕ್ಷಿಸಿದನು ಕುಗ್ಗಿದವನಾಗಿದ್ದ ಎನ್ನನು II</verse>
				<verse number="7">ಹಿಂತಿರುಗು ನನ್ನ ಮನವೆ, ವಿಶ್ರಾಂತಿ ನೆಲೆಗೆ II ಮಹೋಪಕಾರಗಳನ್ನು ಎಸಗಿಹನು ಪ್ರಭು ನಿನಗೆ II</verse>
				<verse number="8">ತಪ್ಪಿಸಿಹನು ಮರಣಕೆ ನಾನೀಡಾಗದಂತೆ I ಸಂತೈಸಿಹನು ಕಂಬನಿಯ ನಾ ಸುರಿಸದಂತೆ I ಕಾಪಾಡಿಹನು ಕಾಲೆಡವಿ ನಾ ಬೀಳದಂತೆ II</verse>
				<verse number="9">ಎಂದೇ ನಡೆವೆನು ನಾನು ಪ್ರಭುವಿನ ಕಣ್ಮುಂದೆ I ಅಂತೆಯೇ ಬಾಳುವೆ ಜೀವಲೋಕದೊಳಿದ್ದೇ II</verse>
				<verse number="10">ನಾ ನುಡಿದೆನಾದರೂ ‘ಬಹಳ ಸಂಕಟದಲ್ಲಿರುವೆ’ನೆಂದು I ನಾನುಸುರಿದೆನಾದರೂ ‘ಯಾರನು ನಂಬಲಾಗ’ದೆಂದು I ನನ್ನಲ್ಲಿ ಅಳಿಯದೆ ಉಳಿಯಿತಾ ವಿಶ್ವಾಸವು ಎಂದೆಂದು II</verse>
				<verse number="11"></verse>
				<verse number="12">ಪ್ರಭು ಎನಗೆ ಮಾಡಿದ ಮಹೋಪಕಾರಗಳಿಗಾಗಿ I ನನ್ನಿಂದೇನು ಮಾಡಲು ಸಾಧ್ಯ ಪ್ರತಿಯಾಗಿ? II</verse>
				<verse number="13">ಎತ್ತಿ ಹಿಡಿವೆನು ರಕ್ಷಣೆಯ ಪಾನಪಾತ್ರೆಯನು I ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು II</verse>
				<verse number="14">ಆತನಿಗೆ ನಾ ಹೊತ್ತ ಹರಕೆಗಳನು I ಆತನ ಸಭೆಮುಂದೆಯೆ ತೀರಿಸುವೆನು II</verse>
				<verse number="15">ಪ್ರಭು ಅಲ್ಪವೆಂದೆಣಿಸನು I ತನ್ನ ಭಕ್ತರ ಮರಣವನು II</verse>
				<verse number="16">ಹೇ ಪ್ರಭು, ಕರುಣಿಸು, ನಾ ನಿನ್ನ ಕಿಂಕರನು I ನಿನ್ನ ದಾಸಿಯ ಮಗನು, ನಿನ್ನ ಸೇವಕನು I ಬಿಡಿಸಿರುವೆ ನೀನು ನನ್ನ ಬಂಧನಗಳನು II</verse>
				<verse number="17">ಅರ್ಪಿಸುವೆ ನಾ ನಿನಗೆ ಕೃತಜ್ಞತಾ ಬಲಿಗಳನು I ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು II</verse>
				<verse number="18">ಹೇ ಜೆರುಸಲೇಮೇ, ನಿನ್ನ ಮಧ್ಯದೊಳು I ಆತನಿರುವ ಮಂದಿರದ ಅಂಗಳದೊಳು I ತೀರಿಸುವೆನು ಆತನ ಸಭೆಯ ಸಮ್ಮುಖದೊಳು I ಅರ್ಪಿಸುವೆನು ನಾ ಹೊತ್ತ ಆ ಹರಕೆಗಳನು II</verse>
			</chapter>
			<chapter number="117">
				<verse number="1">ಸ್ತುತಿ ಮಾಡಿ ಪ್ರಭುವನು ಸಮಸ್ತ ರಾಷ್ಟ್ರಗಳೇ I ಆತನನು ಹೊಗಳಿ ಹಾಡಿ ಸರ್ವಜನಾಂಗಗಳೇ II</verse>
				<verse number="2">ನಮ್ಮ ಮೇಲೆ ಆತನಿಗಿರುವ ಪ್ರೀತಿ ಅಚಲ I ಆತನ ಸತ್ಯಪರತೆ ಇರುವುದು ಅನಂತ ಕಾಲ II</verse>
			</chapter>
			<chapter number="118">
				<verse number="1">ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ I ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ II</verse>
				<verse number="2">ಸಾರಲಿ ಇಸ್ರಯೇಲಿನ ಜನತೆ I ‘ಆತನ ಪ್ರೀತಿ ಶಾಶ್ವತ’ ಎಂದೆ II</verse>
				<verse number="3">ಸಾರಲಿ ಆರೋನನ ವಂಶಲತೆ: I ‘ಆತನ ಪ್ರೀತಿ ಶಾಶ್ವತ’ ಎಂದೆ II</verse>
				<verse number="4">ಸಾರಲಿ ಆತನ ಭಕ್ತರ ಪಂಥ I ಆತನ ಪ್ರೀತಿ ಶಾಶ್ವತ ಅಂಥ II</verse>
				<verse number="5">ಇಕ್ಕಟ್ಟಿನಲ್ಲಿ ಮೊರೆಯಿಟ್ಟೆನು ಪ್ರಭುವಿಗೆ I ಕಿವಿಗೊಟ್ಟು ಬಿಡುಗಡೆಯಿತ್ತನು ಆತನೆನಗೆ II</verse>
				<verse number="6">ಪ್ರಭು ನನ್ನ ಕಡೆ ಇರಲು ಭಯಪಡೆನು I ನನಗೇನು ಮಾಡಿಯಾನು ಮನುಜನು? II</verse>
				<verse number="7">ನೆರವು ನೀಡಲು ಪ್ರಭು ಎನ್ನಕಡೆ ಇಹನು I ಶತ್ರುಗಳತ್ತ ಜೇತಾರನಾಗಿ ನೋಡುವೆನು II</verse>
				<verse number="8">ಮನುಜರಲಿ ಭರವಸೆಯಿಡುವುದಕ್ಕಿಂತ I ಪ್ರಭುವನು ಆಶ್ರಯಿಸಿಕೊಳ್ಳುವುದು ಹಿತ II</verse>
				<verse number="9">ರಾಜರಲಿ ಭರವಸೆಯಿಡುವುದಕ್ಕಿಂತ I ಪ್ರಭುವನು ಆಶ್ರಯಿಸಿಕೊಳ್ಳುವುದು ಹಿತ II</verse>
				<verse number="10">ಶತ್ರುರಾಷ್ಟ್ರಗಳೆಲ್ಲಾ ಸುತ್ತುವರಿದಿದ್ದವು ಎನ್ನನು I ಪ್ರಭುವಿನ ನಾಮಬಲದಲಿ ಧ್ವಂಸಮಾಡಿದೆನವುಗಳನು II</verse>
				<verse number="11">ಸುತ್ತಮುತ್ತಲು ಮುತ್ತಿಕೊಂಡಿದ್ದರು ಎನ್ನನು I ಪ್ರಭುವಿನ ನಾಮಬಲದಲಿ ಸಂಹರಿಸಿದೆನವರನು II</verse>
				<verse number="12">ಕವಿದಿದ್ದರು ಎನ್ನನು ಜೇನುನೊಣಗಳಂತೆ I ಪ್ರಭುವಿನ ನಾಮಬಲದಲಿ ಅವರನು ಸಂಹರಿಸಿದೆ I ಮುಳ್ಳುಗಿಡವನು ಬೆಂಕಿ ಸುಟ್ಟುಹಾಕುವಂತೆ II</verse>
				<verse number="13">ನನ್ನನು ತಳ್ಳಿ ಬೀಳಿಸ ನೋಡಿದರು ನೆಲಕೆ I ಆದರೆ ಪ್ರಭು ನೆರವು ನೀಡಿದನು ಎನಗೆ II</verse>
				<verse number="14">ಪ್ರಭುವೇ ನನಗೆ ಬಲವು, ಧೈರ್ಯವು I ಆತನಿಂದಲೇ ನನಗೆ ಉದ್ಧಾರವು II</verse>
				<verse number="15">ಜಯಘೋಷ, ಹರ್ಷಸುನಾದ ಸಜ್ಜನರ ಬಿಡಾರದಿಂದ I “ಪರಾಕ್ರಮ, ಪ್ರದರ್ಶನ ಪ್ರಭುವಿನ ಬಲಗೈಯಿಂದ II</verse>
				<verse number="16">ವಿಜಯಸಾಧನ ಪ್ರಭುವಿನಾ ಬಲಗೈಯಿಂದ I ಪರಾಕ್ರಮ, ಪ್ರದರ್ಶನವೂ ಅದರಿಂದ” II</verse>
				<verse number="17">ಸಾಯೆನು, ಜೀವದಿಂದಿರುವೆನು ನಾನು I ಪ್ರಭುವಿನ ಕಾರ್ಯಗಳನು ಸಾರುವೆನು II</verse>
				<verse number="18">ಗುರಿಪಡಿಸಿಹನು ಎನ್ನನು ಪ್ರಭು ಕಠಿಣ ಶಿಕ್ಷೆಗೆ I ಆದರೂ ಗುರಿಮಾಡಲಿಲ್ಲ ಎನ್ನನು ಮರಣಕೆ II</verse>
				<verse number="19">ತೆರೆಯಿರಿ ಎನಗೆ ನೀತಿದ್ವಾರಗಳನು I ಒಳನುಗ್ಗಿ ಹೊಗಳುವೆನು ಪ್ರಭುವನು II</verse>
				<verse number="20">ಇದುವೇ ದ್ವಾರ ಪ್ರಭುವಿನ ಮಂದಿರಕೆ I ಇದುವೇ ಪ್ರವೇಶಮಾರ್ಗ ಸಜ್ಜನರಿಗೆ II</verse>
				<verse number="21">ಸದುತ್ತರ ಪಾಲಿಸಿದ ಪ್ರಭೂ, ನಿನಗೆ ವಂದನೆ I ಉದ್ಧಾರ ಮಾಡಿದೆ, ನಿನಗೆ ಕೃತಜ್ಞತಾವಂದನೆ II</verse>
				<verse number="22">ಮನೆಕಟ್ಟುವವರು ಮೂಲೆಗೆಸೆದ ಕಲ್ಲು I ಆಯಿತು ನೋಡು, ಮುಖ್ಯವಾದ ಮೂಲೆಗಲ್ಲು II</verse>
				<verse number="23">ಪ್ರಭುವಿನಿಂದಲೆ ಆದ ಈ ಕಾರ್ಯ I ನಮ್ಮ ಕಣ್ಣಿಗೆ ಅದೆಂತಹ ಆಶ್ಚರ್ಯ! II</verse>
				<verse number="24">ಪ್ರಭುವೇ ನಿಯೋಜಿಸಿದ ದಿನವಿದು I ಹರ್ಷಿಸಿ ಆನಂದಿಸೋಣ ಇಂದು II</verse>
				<verse number="25">ರಕ್ಷಿಸು ಪ್ರಭೂ, ರಕ್ಷಿಸು ದಯವಿಟ್ಟು I ಸುಕ್ಷೇಮ ನೀಡು ಪ್ರಭು ಕರುಣೆಯಿಟ್ಟು II</verse>
				<verse number="26">ಪ್ರಭುವಿನ ನಾಮದಲಿ ಬರುವವನಿಗೆ ಜಯಮಂಗಳ I ಪ್ರಭುವಿನ ಮಂದಿರದಲ್ಲಿಹ ನಮ್ಮಿಂದ ಶುಭಮಂಗಳ II</verse>
				<verse number="27">ಪ್ರಭುವೆ ದೇವನು, ನಮ್ಮ ಮೇಲೆ ಜ್ಯೋತಿಯನು ಬೆಳಗಿದವನು I ಪ್ರದಕ್ಷಿಣೆ ಮಾಡಿರಿ, ಬಲಿಪೀಠದ ಸುತ್ತ, ಹಿಡಿದು ರೆಂಬೆಗಳನು II</verse>
				<verse number="28">ಸಲ್ಲಿಸಿ ನೀವೆಲ್ಲ ಪ್ರಭುವಿಗೆ ಧನ್ಯವಾದ I ಆತ ಒಳ್ಳೆಯವ, ಆತನ ಪ್ರೀತಿ ಶಾಶ್ವತ II</verse>
			</chapter>
			<chapter number="119">
				<verse number="1">(ಹಿಬ್ರು ಅಕ್ಷರ ಕ್ರಮಾನುಸಾರ ವಿರಚಿತ ಕೀರ್ತನೆ) ಪ್ರಭುವಿನ ಶಾಸ್ತ್ರಾನುಸಾರ ನಡೆದವರು ಧನ್ಯರು I ದೋಷರಹಿತ ಮಾರ್ಗದಲಿ ನಡೆವವರು ಧನ್ಯರು II</verse>
				<verse number="2">ಆತನ ಕಟ್ಟಳೆಗಳನ್ನು ಕೈಗೊಳ್ಳುವವರು ಧನ್ಯರು I ಮನಃಪೂರ್ವಕವಾಗಿ ಆತನನು ಅರಸುವವರು ಧನ್ಯರು II</verse>
				<verse number="3">ಅಕ್ರಮಗೈಯರು ಅಂಥವರಾರು I ಆತ ತೋರಿದ ಮಾರ್ಗದಲೆ ನಡೆವರು II</verse>
				<verse number="4">ನಿನ್ನ ನೇಮಗಳನು ಪ್ರಭೂ, ನೀನೆ ವ್ಯಕ್ತಪಡಿಸಿರುವೆಯಯ್ಯಾ I ಜಾಗರೂಕತೆಯಿಂದ ಪಾಲಿಸಬೇಕೆಂದು ನೀ ವಿಧಿಸಿರುವೆಯಯ್ಯಾ II</verse>
				<verse number="5">ನಿನ್ನ ನಿಬಂಧನೆಗಳ ಪಾಲನೆಯಲಿ I ಸ್ಥಿರತೆ ಇದ್ದರೆ ಒಳಿತು ನನ್ನ ಮನದಲಿ II</verse>
				<verse number="6">ಲಕ್ಷ್ಯ ಕೊಟ್ಟೆನಾದರೆ ನಿನ್ನೆಲ್ಲ ಆಜ್ಞೆಗಳಿಗೆ I ಆಸ್ಪದವಿರದು ಎನಗೆ ಪ್ರಭು, ಆಶಾಭಂಗಕೆ II</verse>
				<verse number="7">ನೀತಿಯುತ ನಿನ್ನ ವಿಧಿಗಳನು ಕಲಿಯುವೆನಯ್ಯಾ I ಯಥಾರ್ಥ ಹೃದಯದಿಂದ ನಿನ್ನ ಸ್ತುತಿಪೆನಯ್ಯಾ II</verse>
				<verse number="8">ನಿನ್ನ ನಿಬಂಧನೆಗಳನು ಅನುಸರಿಸುವೆನಯ್ಯಾ I ನನ್ನನೆಂದಿಗೂ, ಪ್ರಭು, ಕೈಬಿಡದಿರಯ್ಯಾ II</verse>
				<verse number="9">ನಡತೆಯಲಿ ಶುದ್ಧವಿರಲು ಯುವಜನಕೆ ಹೇಗೆ ಸಾಧ್ಯ? I ನಿನ್ನಯ ವಾಕ್ಯಾನುಸರಣೆಯಿಂದಲೆ ಅವರಿಗದು ಸಾಧ್ಯ II</verse>
				<verse number="10">ತುಂಬುಹೃದಯದಿಂದ ಹಂಬಲಿಸುತ್ತಿರುವೆನಯ್ಯಾ I ನಿನ್ನಾಜ್ಞೆಯಿಂದ ನಾ ತಪ್ಪದಂತೆ ಕಾಯಯ್ಯಾ II</verse>
				<verse number="11">ನಿನಗೆ ವಿರುದ್ಧ ನಾ ಪಾಪಮಾಡದಂತೆ I ನಿನ್ನಾ ನುಡಿಯನು ನನ್ನೆದೆಯಲ್ಲಿರಿಸಿದೆ II</verse>
				<verse number="12">ಸ್ತುತಿ ಸಲ್ಲಲಿ ಪ್ರಭು ನಿನಗೆ I ನಿನ್ನ ಆಜ್ಞೆಗಳನು ಕಲಿಸು ಎನಗೆ II</verse>
				<verse number="13">ಬಂದುವು ಆ ವಿಧಿಗಳು ನಿನ್ನ ಬಾಯಿಂದ I ವರ್ಣಿಸುವೆನು ಅವನ್ನು ನನ್ನ ಬಾಯಿಂದ II</verse>
				<verse number="14">ಸಿರಿಸಂಪತ್ತಿಗಿಂತ ಮಿಗಿಲಾಗಿ I ಆನಂದಿಪೆ ನಿನ್ನ ಮಾರ್ಗಿಯಾಗಿ II</verse>
				<verse number="15">ನನಗಿದೆ ನಿನ್ನ ನಿಯಮಗಳ ಧ್ಯಾನ I ನಿನ್ನ ಮಾರ್ಗಗಳಲ್ಲಿ ಗಾಢ ಗಮನ II</verse>
				<verse number="16">ನಿನ್ನ ನಿಯಮಗಳ ನೆನೆದು ನಲಿವೆನಯ್ಯಾ I ನಿನ್ನ ವಾಕ್ಯವನು ಮರೆಯಲಾರೆನಯ್ಯಾ II</verse>
				<verse number="17">ನಿನ್ನ ನುಡಿಯ ಕೇಳಿ ಬಾಳುವಂತೆ I ತೋರು ದಾಸನೆನಗೆ ಪ್ರಸನ್ನತೆ II</verse>
				<verse number="18">ನಿನ್ನ ಶಾಸ್ತ್ರದ ಮಹಿಮೆಯನು ಅರಿಯುವಂತೆ I ನನ್ನ ಕಣ್ಗಳಿಂದ ನೀ ತೆಗೆದುಬಿಡು ಅಂಧತೆ II</verse>
				<verse number="19">ಧರೆಯೊಳು ಪ್ರವಾಸಿಯಾಗಿ ನಾನಿರುವೆನಯ್ಯಾ I ನಿನ್ನಾಜ್ಞೆಗಳನು ನನಗೆ ಮರೆಮಾಡಬೇಡಯ್ಯಾ II</verse>
				<verse number="20">ನಿನ್ನ ವಿಧಿಗಳನೆ ಹಂಬಲಿಸುತಿರುವೆ ಅನುದಿನ I ಇದು ಕಾರಣ ಕರಗಿಹೋಗುತಿದೆ ಎನ್ನ ಚೇತನ II</verse>
				<verse number="21">ಶಾಪಗ್ರಸ್ತರು ನಿನ್ನ ಆಜ್ಞೆಗಳನು ಮೀರಿದವರು I ನಿನ್ನ ಧಿಕ್ಕಾರಕ್ಕೆ ಗುರಿಯಾಗುವರು ಆ ಗರ್ವಿಷ್ಠರು II</verse>
				<verse number="22">ನಿನ್ನ ಕಟ್ಟಳೆಗಳನು ಕೈಗೊಂಡು ನಡೆವವನು ನಾನು I ನನಗಿರುವ ನಿಂದಾಪಮಾನಗಳನು ತೊಲಗಿಸು ನೀನು II</verse>
				<verse number="23">ಒಳಸಂಚು ಮಾಡುತ್ತಿದ್ದರು ಒಡೆಯರು ಎನಗೆದುರಾಗಿ I ದಾಸ ನಾನಿರುವೆ ನಿನ್ನ ಆಜ್ಞೆಗಳಲೆ ಮಗ್ನನಾಗಿ II</verse>
				<verse number="24">ನಿನ್ನಾಜ್ಞೆಯು ಆನಂದದಾಯಕ I ಅವೇ ನನಗೆ ಮಂತ್ರಾಲೋಚಕ II</verse>
				<verse number="25">ನನ್ನ ಪ್ರಾಣ ಸೊರಗಿ ಸುಣ್ಣವಾಗಿದೆಯಯ್ಯಾ I ನಿನ್ನ ವಾಕ್ಯಾನುಸಾರ ಉಜ್ಜೀವಗೊಳಿಸಯ್ಯಾ II</verse>
				<verse number="26">ನನ್ನ ಗತನಡತೆಯನು ಕೇಳಿ ಸದುತ್ತರಿಸಿದೆಯಯ್ಯಾ I ನಿನ್ನ ನಿಬಂಧನೆಗಳನೀಗ ನನಗೆ ಉಪದೇಶಿಸಯ್ಯಾ II</verse>
				<verse number="27">ನಿನ್ನ ನಿಯಮಗಳ ಪಥವನೆನಗೆ ತಿಳಿಯಪಡಿಸಯ್ಯಾ I ನಿನ್ನ ಅದ್ಭುತಕಾರ್ಯಗಳನು ನಾ ಧ್ಯಾನಿಸುವೆನಯ್ಯಾ II</verse>
				<verse number="28">ದುಃಖದಿಂದ ಸೊರಗಿಹೋಗಿದೆ ಎನ್ನಮನ I ನಿನ್ನ ವಾಕ್ಯಾನುಸಾರ ನೀಡು ಸಾಂತ್ವನ II</verse>
				<verse number="29">ಮಿಥ್ಯಮಾರ್ಗವನು ನನಗೆ ದೂರಮಾಡಯ್ಯಾ I ಧರ್ಮಶಾಸ್ತ್ರವನು ಎನಗೆ ಅನುಗ್ರಹಿಸಯ್ಯಾ II</verse>
				<verse number="30">ಆರಿಸಿಕೊಂಡಿರುವೆನು ನಾನು ಸತ್ಯಮಾರ್ಗವನು I ಇರಿಸಿಕೊಂಡಿಹೆನು ಕಣ್ಮುಂದೆ ನಿನ್ನ ವಿಧಿಗಳನು II</verse>
				<verse number="31">ಅಂಟಿಕೊಂಡಿರುವೆನು ನಿನ್ನ ಕಟ್ಟಳೆಗಳಿಗೆ I ಆಶಾಭಂಗಪಡಿಸಬೇಡ ಪ್ರಭು ನನಗೆ II</verse>
				<verse number="32">ಹಿಡಿದಿರುವೆನು ನಿನ್ನ ಆಜ್ಞಾಮಾರ್ಗವನು I ಏಕೆನೆ ಹಿರಿದಾಗಿಸಿರುವೆ ನೀ ನನ್ನ ಅರಿವನು II</verse>
				<verse number="33">ನಿನ್ನ ನಿಬಂಧನೆಯನು, ಪ್ರಭು, ಕಲಿಸೆನಗೆ I ಅದರಂತೆಯೇ ನಡೆಯುವೆನು ಕಡೆಯವರೆಗೆ II</verse>
				<verse number="34">ನೀಡೆನಗೆ ನಿನ್ನ ಶಾಸ್ತ್ರದ ಅರಿವನು I ಪೂರ್ಣಮನದಿಂದ ಆಚರಿಸುವೆನದನು II</verse>
				<verse number="35">ಎನ್ನ ನಡೆಸು ನಿನ್ನ ಆಜ್ಞಾಮಾರ್ಗದಲಿ I ಪಡೆಯುವೆ ಹರ್ಷಾನಂದವನು ಅದರಲಿ II</verse>
				<verse number="36">ತಿರುಗಿಸೆನ್ನ ಮನವ ನಿನ್ನ ಕಟ್ಟಳೆಯ ಕಡೆ I ಲಾಭಲೋಭದತ್ತ ಅದು ಸರಿಯದಂತೆ ತಡೆ II</verse>
				<verse number="37">ವ್ಯರ್ಥವಾದವುಗಳು ನಾಟದಿರಲಿ ಕಣ್ಗೆ I ಚೇತನ ನೀಡು ನಿನ್ನ ಮಾರ್ಗದಲಿ ನನಗೆ II</verse>
				<verse number="38">ಭಯಭಕ್ತ ಜನತೆಗೆ ನೀನಿತ್ತಾ ಮಾತು I ದಾಸನಾದ ನನ್ನಲಿ ನೆರವೇರಲಿ ಇಂತು II</verse>
				<verse number="39">ತೊಲಗಲಿ ನಾನಂಜುವ ಅಪಮಾನವು I ನಿನ್ನ ವಿಧಿಗಳು ನನಗೆ ಹಿತಕರವಾದುವು II</verse>
				<verse number="40">ನಿನ್ನ ನಿಬಂಧನೆಗಳ ಅಭಿಮಾನಿಯು ನಾನು I ನೀತಿಗನುಸಾರ ಚೇತನಗೊಳಿಸೆನ್ನ ನೀನು II</verse>
				<verse number="41">ದೊರಕಲಿ ಪ್ರಭು ನನಗೆ ನಿನ್ನ ಕರುಣೆ I ನೀನು ವಾಗ್ದಾನಮಾಡಿದಾ ರಕ್ಷಣೆ II</verse>
				<verse number="42">ಕೊಡುವೆನಾಗ ಸದುತ್ತರವನು ನಿಂದಕನಿಗೆ I ಕಾರಣ, ನಿನ್ನ ವಾಕ್ಯದಲೆ ಇದೆ ನನಗೆ ನಂಬಿಕೆ II</verse>
				<verse number="43">ತೆಗೆಯಬೇಡ ನನ್ನ ಬಾಯಿಂದ ಸತ್ಯವನು I ನಂಬಿಕೊಂಡಿರುವೆ ನಿನ್ನ ನ್ಯಾಯವಿಧಿಯನು II</verse>
				<verse number="44">ಸತತ ನಿನ್ನ ಧರ್ಮಶಾಸ್ತ್ರವನು ಕೈಗೊಳ್ಳುವೆ I ಯುಗಯುಗಾಂತರಕು ಅದನು ಪರಿಪಾಲಿಸುವೆ II</verse>
				<verse number="45">ನಿನ್ನ ನಿಯಮದಂತೆ ಬಾಳಲು ಯತ್ನಿಸಿದೆ I ಎಂತಲೇ, ಆತಂಕವಿಲ್ಲದೆ ನಡೆದೆ II</verse>
				<verse number="46">ಮಾತಾಡುವೆನು ನಿನ್ನ ಆಜ್ಞೆಗಳ ವಿಷಯವಾಗಿ I ಅರಸುಗಳ ಮುಂದೆಯು ನಿಸ್ಸಂಕೋಚವಾಗಿ II</verse>
				<verse number="47">ನಿನ್ನ ಆಜ್ಞೆಗಳಲ್ಲಿದೆ ನನಗಾನಂದ I ಅವುಗಳ ಮೇಲೆಯೆ ನನಗಭಿಮೋದ II</verse>
				<verse number="48">ನಾ ಕೈಯೊಡ್ಡಿ ಕೇಳುವುದು ನಿನ್ನ ಆಜ್ಞೆಗಳನೆ I ನನಗೆ ಪ್ರಿಯ, ಧ್ಯಾನಾರ್ಹ, ನಿನ್ನ ನಿಬಂಧನೆ II</verse>
				<verse number="49">ಸ್ಮರಿಸಿಕೋ ದಾಸನೆನಗೆ ನೀನಿತ್ತಾ ಮಾತನು I ಹುಟ್ಟಿಸಿರುವೆ ನನ್ನೊಳು ನಂಬಿಕೆ, ನಿರೀಕ್ಷೆಗಳನು II</verse>
				<verse number="50">ನಿನ್ನ ನುಡಿ ತರುತ್ತದೆನಗೆ ನವಚೇತನ I ಆಪತ್ಕಾಲದಲಿ ನನಗದೇ ಸಾಂತ್ವನ II</verse>
				<verse number="51">ಹಾಸ್ಯ ಅಪಹಾಸ್ಯ ಮಾಡಿದರು ಗರ್ವಿಷ್ಠರೆನ್ನನು I ಆದರೂ ನಾ ಬಿಡಲಿಲ್ಲ ನಿನ್ನ ಧರ್ಮಶಾಸ್ತ್ರವನು II</verse>
				<verse number="52">ನಿನ್ನ ಪ್ರಾಚೀನ ವಿಧಿಗಳ ಜ್ಞಾಪನ I ತರುತ್ತದೆನಗೆ ಹೇ ಪ್ರಭೂ, ಸಾಂತ್ವನ II</verse>
				<verse number="53">ನಿನ್ನ ಶಾಸ್ತ್ರದ ಭ್ರಷ್ಠರನು ಕಂಡಾಗ I ನನಗೆ ಬರುತ್ತದೆ ಕೋಪೋದ್ರೇಕ II</verse>
				<verse number="54">ನನ್ನೀ ಬಾಳ ಪ್ರವಾಸ ಮಂದಿರದೊಳು I ಗಾನವಾದುವು ನಿನ್ನಾನಿಬಂಧನೆಗಳು II</verse>
				<verse number="55">ರಾತ್ರಿಯೊಳೂ ಮಾಡಿದೆ ನಿನ್ನ ನಾಮಸ್ಮರಣೆಯನು I ಕೈಗೊಂಡೆನು ಹೇ ಪ್ರಭೂ, ನಿನ್ನ ಧರ್ಮಶಾಸ್ತ್ರವನು II</verse>
				<verse number="56">ಈ ನಿನ್ನ ನಿಯಮಗಳ ಪಾಲನೆ I ನನ್ನ ಪಾಲಿಗದು ಸಂಭಾವನೆ II</verse>
				<verse number="57">ಹೇ ಪ್ರಭು, ನೀನೇ ನನ್ನ ಪಾಲಿನ ಸ್ವಾಸ್ತ್ಯ I ನಿನ್ನ ವಾಕ್ಯದ ಪಾಲನೆಯೆ ನಾಗೈದ ನಿರ್ಣಯ II</verse>
				<verse number="58">ನಿನ್ನ ಕರುಣೆಯನು ಕೋರಿದೆನು ಮನಸಾರ I ಪ್ರಸನ್ನನಾಗು ನನಗೆ ನಿನ್ನ ನುಡಿಗನುಸಾರ II</verse>
				<verse number="59">ನನ್ನಯ ನಡತೆಯನು ಪರಿಶೋಧಿಸುತ್ತ I ತಿರುಗಿಕೊಂಡೆನು ನಿನ್ನ ಕಟ್ಟಳೆಯತ್ತ II</verse>
				<verse number="60">ನಿನ್ನ ಆಜ್ಞೆಯನು ನಾನು ಅನುಸರಿಸುವಲ್ಲಿ I ಆಲಸಿಯಲ್ಲ, ಆಸಕ್ತ ನಾನು ಅದರಲ್ಲಿ II</verse>
				<verse number="61">ದುರ್ಜನರ ಪಾಶಗಳು ಸುತ್ತಿಕೊಂಡಿವೆ ನನ್ನನು I ಆದರು ನಾ ಮರೆಯಲಿಲ್ಲ ನಿನ್ನ ಧರ್ಮಶಾಸ್ತ್ರವನು II</verse>
				<verse number="62">ನ್ಯಾಯಯುತ ನಿನ್ನ ವಿಧಿಗೋಸ್ಕರ ವಂದಿಸಲು I ನಾನು ಎಚ್ಚರಗೊಳ್ಳುವೆ ಮಧ್ಯರಾತ್ರಿಯೊಳು II</verse>
				<verse number="63">ಗೆಳೆಯ ನಾನು ನಿನ್ನಲಿ ಭಯಭಕ್ತಿಯುಳ್ಳವರಿಗೆ I ನಿನ್ನ ನಿಯಮಗಳ ಕೈಗೊಂಡು ನಡೆಯುವವರಿಗೆ II</verse>
				<verse number="64">ಪ್ರಭು, ನಿನ್ನಚಲ ಪ್ರೀತಿಯಿಂದ ಜಗ ತುಂಬಿದೆ I ನೀಡೆನಗೆ ಪ್ರಭು, ನಿನ್ನ ನಿಬಂಧನೆಗಳ ಬೋಧೆ II</verse>
				<verse number="65">ಹೇ ಪ್ರಭೂ, ನಿನ್ನ ವಾಗ್ದಾನದ ಪ್ರಕಾರ I ಮಾಡಿದೆ ನಿನ್ನ ದಾಸನಿಗೆ ಮಹೋಪಕಾರ II</verse>
				<verse number="66">ಸುಜ್ಞಾನ ವಿವೇಕಗಳನು ಕಲಿಸೆನಗೆ I ನಿನ್ನಾಜ್ಞೆಗಳಲಿ ನನಗಿದೆ ನಂಬಿಕೆ II</verse>
				<verse number="67">ಕಷ್ಟಾನುಭವಕೆ ಮುಂಚೆ ದಾರಿತಪ್ಪಿ ನಡೆದೆ I ಆದರೀಗ ನಡೆಯುತ್ತಿರುವೆ ನಿನ್ನ ನುಡಿಯಂತೆ II</verse>
				<verse number="68">ಒಳ್ಳೆಯವ, ಒಳ್ಳೆಯದ ಗೈಕೊಳ್ಳುವ ನೀನು I ಬೋಧಿಸೆನಗೆ ನಿನ್ನಾ ನಿಬಂಧನೆಗಳನು II</verse>
				<verse number="69">ಸುಳ್ಳು ಕಲ್ಪಿಸಿಹರಾ ಗರ್ವಿಗಳು ನಿನಗೆ ವಿರುದ್ಧವಾಗಿ I ನಾನೋ ಪಾಲಿಪೆ ನಿನ್ನ ನಿಯಮಗಳನು ಹೃತ್ಪೂರ್ವಕವಾಗಿ II</verse>
				<verse number="70">ಕೊಬ್ಬಿನಂತೆ ಆ ಜನರ ಹೃದಯ ಮಂದ I ನಿನ್ನ ಧರ್ಮಶಾಸ್ತ್ರವೇ ನನಗಾನಂದ II</verse>
				<verse number="71">ಕಷ್ಟಾನುಭವವೂ ಆಯಿತೆನಗೆ ಹಿತಕರ I ಅದು ತಂದಿತು ನಿನ್ನ ನಿಬಂಧನೆಗಳೆಚ್ಚರ II</verse>
				<verse number="72">ಸಾವಿರಾರು ಚಿನ್ನಬೆಳ್ಳಿ ನಾಣ್ಯಗಳಿಗಿಂತ I ನಿನ್ನ ಬಾಯಿಂದ ಬಂದ ಧರ್ಮಶಾಸ್ತ್ರ ಉಚಿತ II</verse>
				<verse number="73">ನನ್ನನು ನಿರ್ಮಿಸಿ ರೂಪಿಸಿವೆ ನಿನ್ನ ಕೈಗಳು I ನೀಡು ಬುದ್ಧಿಯನು ನಿನ್ನಾಜ್ಞೆಗಳನು ಕಲಿಯಲು II</verse>
				<verse number="74">ನಿನ್ನಾ ವಾಕ್ಯದಲಿ ನಾನಿತ್ತ ನಿರೀಕ್ಷೆಯಿಂದ I ಭಯಭಕ್ತಿಯುಳ್ಳವನು ನೋಡಿ ಪಡೆದನು ಆನಂದ II</verse>
				<verse number="75">ನಾ ಬಲ್ಲೆ ಪ್ರಭು, ನಿನ್ನ ವಿಧಿಗಳು ನೀತಿಯುತವೆಂದು I ಕಷ್ಟಕೆ ನನ್ನನು ಗುರಿಪಡಿಸಿರುವುದು ಉಚಿತವೆಂದು II</verse>
				<verse number="76">ನಿನ್ನ ದಾಸನಿಗೆ ನೀನು ನುಡಿದ ಪ್ರಕಾರ I ಸಾಂತ್ವನ ನೀಡಲಿ ನನಗೆ ನಿನ್ನಚಲ ಒಲವರ II</verse>
				<verse number="77">ನಾ ಬದುಕುವಂತೆ ತೋರೆನಗೆ ನಿನ್ನ ದಯ I ನಿನ್ನ ಧರ್ಮಶಾಸ್ತ್ರ ನನಗೆ ಪರಮಪ್ರಿಯ II</verse>
				<verse number="78">ನನಗೆ ಕೇಡು ಬಗೆದ ಗರ್ವಿಗಳಿಗಾಗಲಿ ಮಾನಭಂಗ I ನಾನಾದರೋ ಗೈವೆ ನಿನ್ನ ನೇಮಗಳ ಧ್ಯಾನಯೋಗ II</verse>
				<verse number="79">ನನ್ನತ್ತ ಬರಲಿ ನಿನ್ನಲಿ ಭಯಭೀತಿಯುಳ್ಳವರು I ನಿನ್ನ ಕಟ್ಟಳೆಗಳನು ಆಗ ಕಲಿತುಕೊಳ್ಳುವರು II</verse>
				<verse number="80">ನಿನ್ನ ನಿಬಂಧನೆಗಳಲಿ ಸ್ಥಿರವಿದೆ ಎನ್ನ ಮನ I ನನಗೆ ಒದಗದು ಆಗ ಆಶಾಭಂಗ, ಅವಮಾನ II</verse>
				<verse number="81">ಮನಗುಂದಿರುವೆ ನಾ ಮುಕ್ತಿಯ ಬಯಕೆಯಲೆ I ನಂಬಿಕೆಯನು ಇಟ್ಟಿರುವೆ ನಿನ್ನ ವಾಕ್ಯದಲೆ II</verse>
				<verse number="82">ನಿನ್ನ ವಾಗ್ದಾನದ ನಿರೀಕ್ಷೆಯಲೆ ನನ್ನ ಕಣ್ಣು ಸೊರಗಿವೆ I “ನನಗೆಂದು ನೀಡುವೆ ಸಾಂತ್ವನ?” ಎಂದು ನಾ ಕೇಳುತ್ತಿರುವೆ II</verse>
				<verse number="83">ಬೆಂಕಿಗೆ ಬಿಸಾಡಿದ ಒಣ ಬುದ್ಧಲಿಯಂತಾದೆ I ಆದರೂ ನಿನ್ನ ನಿಬಂಧನೆಗಳನ್ನು ಮರೆಯದಿದ್ದೆ II</verse>
				<verse number="84">ನಿನ್ನ ದಾಸ ನಾನೆಷ್ಟು ದಿನ ಕಾದಿರಬೇಕಯ್ಯಾ I ನನ್ನ ಹಿಂಸಕರಿಗೆಂದು ಶಿಕ್ಷೆ ವಿಧಿಸುವೆಯಯ್ಯಾ? II</verse>
				<verse number="85">ಗುಂಡಿ ಅಗೆದಿಹರು ಎನಗೆ ಗರ್ವಿಷ್ಠರು I ಧರ್ಮಶಾಸ್ತ್ರ ಪಾಲಿಸದ ಆ ದುರುಳರು II</verse>
				<verse number="86">ನಿನ್ನ ಆಜ್ಞೆಗಳೆಲ್ಲ ನಂಬಲರ್ಹವಾದುವಯ್ಯಾ I ನಿಷ್ಕಾರಣವಾಗಿ ಹಿಂಸಿಸುತಿಹರು, ನೆರವಾಗಯ್ಯಾ II</verse>
				<verse number="87">ಅಳಿಸಿಹಾಕಲು ನೋಡಿದರು ಇಳೆಯಿಂದೆನ್ನನು I ಆದರು ಉಳಿಸಿಕೊಂಡೆನು ನಿನ್ನ ನಿಯಮಗಳನು II</verse>
				<verse number="88">ನಿನ್ನಚಲ ಪ್ರೀತಿಗನುಸಾರ ಚೈತನ್ಯಗೊಳಿಸೆನ್ನನು I ಕೈಗೊಳ್ಳುವೆನಾಗ ನಿನ್ನ ಬಾಯುಸುರಿದ ಕಟ್ಟಳೆಗಳನು II</verse>
				<verse number="89">ಹೇ ಪ್ರಭು, ನಿನ್ನ ವಾಕ್ಯ ಶಾಶ್ವತ I ಪರಲೋಕದಲಿ ಅದು ಚಿರ ಶಾಶ್ವತ II</verse>
				<verse number="90">ಇರುವುದು ತಲತಲಾಂತರಕು ನಿನ್ನ ಸತ್ಯತೆ I ನೀ ಸ್ಥಾಪಿಸಿದ ಭೂಮಂಡಲಕ್ಕಿದೆ ಸ್ಥಿರತೆ II</verse>
				<verse number="91">ನಿನ್ನ ವಿಧಿಗನುಸಾರ ಅವು ಇಂದಿಗೂ ಉಳಿದಿವೆ I ಏಕೆನೆ, ಸರ್ವವೂ ಮಾಡುತಿವೆ ನಿನಗೆ ಸೇವೆ II</verse>
				<verse number="92">ನಿನ್ನ ಧರ್ಮಶಾಸ್ತ್ರವು ನೀಡಿರದಿದ್ದರೆ ನನಗೆ ಸಂತಸ I ನನಗೊದಗಿದ ವಿಪತ್ತಿನಲೆ ನಾ ಹೊಂದುತ್ತಿದ್ದೆ ವಿನಾಶ II</verse>
				<verse number="93">ಮರೆಯೆ ನಾನೆಂದಿಗೂ ನಿನ್ನ ನಿಯಮಗಳನು I ಅವುಗಳಿಂದಲೇ ನನಗಿತ್ತೆ ನವಜೀವನವನು II</verse>
				<verse number="94">ಉದ್ಧರಿಸೆನ್ನನು, ನಾನು ನಿನ್ನವನು I ನಿನ್ನ ನಿಯಮಗಳಲೇ ಆಸಕ್ತನು II</verse>
				<verse number="95">ಹೊಂಚುಹಾಕುತಿಹರು ದುರುಳರು ಸಂಹರಿಸಲೆನ್ನನು I ನಾನೋ ನಿನ್ನ ಕಟ್ಟಳೆಗಳನು ಲಕ್ಷಿಸುತ್ತಿರುವೆನು II</verse>
				<verse number="96">ನಾ ಬಲ್ಲೆ ಸರ್ವಸಂಪೂರ್ಣತೆಗೂ ಮಿತಿ ಉಂಟೆಂದು I ನಿನ್ನ ಆಜ್ಞೆಗಳಾದರೋ ಅಪರಿಮಿತವಾದುವೆಂದು II</verse>
				<verse number="97">ನಿನ್ನ ಧರ್ಮಶಾಸ್ತ್ರ ನನಗೆನಿತೋ ಪ್ರಿಯ I ನಾನದರಲೇ ದಿನವೆಲ್ಲಾ ಧ್ಯಾನಮಯ II</verse>
				<verse number="98">ನಿನ್ನಾಜ್ಞೆಗಳು ಸದಾ ನನ್ನೊಂದಿಗಿರುವುದರಿಂದ I ನಾನಧಿಕ ಬುದ್ಧಿವಂತ ನನ್ನ ಶತ್ರುಗಳಿಗಿಂತ II</verse>
				<verse number="99">ನಿನ್ನ ಕಟ್ಟಳೆಗಳ ಧ್ಯಾನಿ ನಾನಾದುದರಿಂದ I ನಾನಧಿಕ ಜ್ಞಾನಿ ನನ್ನ ಬೋಧಕರೆಲ್ಲರಿಗಿಂತ II</verse>
				<verse number="100">ನಿನ್ನ ನಿಯಮಗಳನು ಕೈಗೊಂಡುದರಿಂದ I ನಾನಧಿಕ ವಿವೇಕಿ ಗುರುಹಿರಿಯರಿಗಿಂತ II</verse>
				<verse number="101">ನಿನ್ನ ವಾಕ್ಯವನು ಅನುಸರಿಸುವ ಧ್ಯೇಯದಿಂದ I ನನ್ನ ಹೆಜ್ಜೆಗಳನು ತಡೆದೆನು ದುರ್ಮಾರ್ಗದಿಂದ II</verse>
				<verse number="102">ತಪ್ಪಿಸಿಕೊಳ್ಳಲಿಲ್ಲ ನಾ ನಿನ್ನ ವಿಧಿಗಳಿಂದ I ನೀನೇ ನನಗದರ ಬೋಧನೆ ಮಾಡಿದ್ದರಿಂದ II</verse>
				<verse number="103">ನಿನ್ನ ನುಡಿ ಎನಿತೊ ರುಚಿ ನನ್ನ ನಾಲಿಗೆಗೆ I ಜೇನುತುಪ್ಪಕ್ಕಿಂತ ಸಿಹಿ ನನ್ನ ಬಾಯಿಗೆ II</verse>
				<verse number="104">ವಿವೇಕಿಯಾದೆನು ನಿನ್ನ ನಿಯಮಗಳ ಮೂಲಕ I ದ್ವೇಷಿಸುತಿಹೆನು ಪ್ರತಿಯೊಂದು ಮಿಥ್ಯಾ ಮಾರ್ಗ II</verse>
				<verse number="105">ನಿನ್ನ ವಾಕ್ಯ ನನಗೆ ದಾರಿದೀಪ I ನನ್ನ ಕಾಲಿನ ನಡೆಗೆ ಕೈದೀಪ II</verse>
				<verse number="106">ನಡೆದುಕೊಳ್ಳುವೆನು ಶಪಥ ಮಾಡಿರುವಂತೆ I ನಿನ್ನ ನೀತಿವಿಧಿಗಳನು ಪಾಲಿಪೆನು ಅದರಂತೆ II</verse>
				<verse number="107">ಕುಗ್ಗಿಹೋಗಿರುವೆನು ಪ್ರಭು ಅತ್ಯಧಿಕವಾಗಿ I ಚೇತನಗೊಳಿಸು ನಿನ್ನ ವಾಕ್ಯಾನುಸಾರವಾಗಿ II</verse>
				<verse number="108">ಸ್ವೀಕರಿಸು ನಾನು ಉಸುರುವ ಸ್ತುತಿಯರ್ಪಣೆಯನು I ಪ್ರಭೂ, ನನಗೆ ಕಲಿಸು ನಿನ್ನ ವಿಧಿನಿಯಮಗಳನು II</verse>
				<verse number="109">ಕೈಯಲಿ ಜೀವ ಹಿಡಿದು ಕಳೆಯುತಿರುವೆ ಕಾಲವೆಲ್ಲ I ಆದರೂ ಪ್ರಭು, ನಾ ಧರ್ಮಶಾಸ್ತ್ರವನು ಮರೆತಿಲ್ಲ II</verse>
				<verse number="110">ಒಡ್ಡಿಹರು ಎನಗೆ ಆ ದುರುಳ ಜನರು ಬಲೆಯನು I ಆದರೂ ಮೀರಿಲ್ಲ ನಾನು ನಿನ್ನ ನಿಯಮಗಳನು II</verse>
				<verse number="111">ಹೃದಯಾನಂದಕರ ನಿನ್ನ ಕಟ್ಟಳೆಗಳು I ನನಗಮರ ಸ್ವಾಸ್ತ್ಯವಾದುವುವು ಅವುಗಳು II</verse>
				<verse number="112">ಮನಸ್ಸುಮಾಡಿರುವೆ ಸದಾ ಕೈಗೊಂಡು ನಡೆಯಲು I ಜೀವಮಾನವೆಲ್ಲ ನಿನ್ನ ನಿಬಂಧನೆಗಳನು II</verse>
				<verse number="113">ದ್ವೇಷವಿದೆ ಎನಗೆ ದ್ವಿಮನಸ್ಕರಲಿ I ಪ್ರೀತಿ ಇದೆ ನಿನ್ನ ಧರ್ಮಶಾಸ್ತ್ರದಲಿ II</verse>
				<verse number="114">ನನ್ನಾಶ್ರಯವೂ ಕವಚವೂ ನೀನೇ I ನಿರೀಕ್ಷಿಸುತಿರುವೆ ನಿನ್ನ ವಾಕ್ಯವನೆ II</verse>
				<verse number="115">ತೊಲಗು ನನ್ನಿಂದ ದುರುಳ ಜನಾಂಗವೆ I ದೈವಾಜ್ಞೆಗಳನು ನಾನು ಪಾಲಿಸುವೆ II</verse>
				<verse number="116">ನಿನ್ನ ನುಡಿಗನುಸಾರ ಉದ್ಧರಿಸು, ನಾ ಬದುಕುವೆ I ನಿರಾಶೆಗೊಳಿಸಬೇಡ ನಾ ನಿರೀಕ್ಷಿಸುತ್ತಿರುವೆ II</verse>
				<verse number="117">ನನಗಾಧಾರವಾಗಿರು ಸುರಕ್ಷಿತನಾಗಿರುವೆ I ನಿನ್ನಾ ನಿಬಂಧನೆಗಳಿಗೆ ಸದಾ ಗಮನ ಕೊಡುವೆ II</verse>
				<verse number="118">ನಿಬಂಧನೆ ಮೀರಿದವರನು ತಿರಸ್ಕರಿಸುತಿ I ವ್ಯರ್ಥವಾದುದಾ ಜನರು ಹೂಡುವ ಕುಯುಕ್ತಿ II</verse>
				<verse number="119">ಲೋಕದ ದುರುಳರನ್ನೆಲ್ಲಾ ಕಸದಂತೆ ಪರಿಗಣಿಸುತ್ತೀ I ಎಂತಲೇ, ನಿನ್ನಾ ಕಟ್ಟಳೆಯಲ್ಲಿದೆ ನನಗೆ ಆಸಕ್ತಿ II</verse>
				<verse number="120">ನಡುಗುತ್ತಿದೆ ದೇಹ ನಿನ್ನ ಭಯದಿಂದ I ಬಾಳಿದೆ ನಿನ್ನ ವಿಧಿಗಳ ಭೀತಿಯಿಂದ II</verse>
				<verse number="121">ಕೈಗೊಳ್ಳುವೆ ನೀತಿಯುತ ನಿನ್ನಾ ವಿಧಿಗಳನು I ಬಲಾತ್ಕಾರಿಗಳಿಗೊಪ್ಪಿಸಬೇಡ ನನ್ನನ್ನು II</verse>
				<verse number="122">ಹೊಣೆಗಾರನಾಗು ನಿನ್ನ ದಾಸನ ಕ್ಷೇಮಕೆ I ಆ ಗರ್ವಿಗಳು ಬಾಧಕರಾಗದಿರಲಿ ನನಗೆ II</verse>
				<verse number="123">ಮಂದವಾಯಿತೆನ್ನ ನೇತ್ರ ನಿನ್ನ ರಕ್ಷಣೆಗಾಗಿ ಕಾಯುತ I ನೀತಿಯುತ ನಿನ್ನ ನುಡಿ ಈಡೇರುವುದನು ನಿರೀಕ್ಷಿಸುತ II</verse>
				<verse number="124">ಕೃಪೆಯಿಂದ ನಡೆಸು ನಿನ್ನ ದಾಸನನು I ಕಲಿಸೆನಗೆ ನಿನ್ನ ನಿಬಂಧನೆಗಳನು II</verse>
				<verse number="125">ನಿನ್ನ ದಾಸ ನಾನು, ದಯಪಾಲಿಸು ಎನಗೆ I ನಿನ್ನ ಕಟ್ಟಳೆಗಳನು ಅರಿವ ತಿಳುವಳಿಕೆ II</verse>
				<verse number="126">ಉಲ್ಲಂಘನೆಯಾಗಿದೆ ಪ್ರಭು, ನಿನ್ನ ಧರ್ಮಶಾಸ್ತ್ರ I ಸಮಯ ಬಂದೊದಗಿದೆ, ಆಗು ನೀನು ಕಾರ್ಯತತ್ಪರ II</verse>
				<verse number="127">ಚಿನ್ನ, ಅಪರಂಜಿಗಿಂತಲೂ ಪ್ರಿಯ I ನಿನ್ನ ಆಜ್ಞೆಗಳು ನನಗೆ ಸುಪ್ರಿಯ II</verse>
				<verse number="128">ನ್ಯಾಯವಾಗಿವೆ ನಿನ್ನ ನಿಯಮಗಳೆಲ್ಲ I ನನಗೆ ಹಗೆ ಮಿಥ್ಯಮಾರ್ಗಗಳೆಲ್ಲ II</verse>
				<verse number="129">ಅಪೂರ್ವವಾದ ನಿನ್ನ ಕಟ್ಟಳೆಗಳನು I ಹೃತ್ಪೂರ್ವಕವಾಗಿ ನಾ ಪಾಲಿಪೆನು II</verse>
				<verse number="130">ತರುವುದು ನಿನ್ನ ವಾಕ್ಯೋಪದೇಶ I ಸರಳ ಜನರಿಗೆ ಜ್ಞಾನ ಪ್ರಕಾಶ II</verse>
				<verse number="131">ಬಾಯ್ದೆರೆದು ಹಾತೊರೆಯುತಿರುವೆ I ನಿನ್ನ ಆಜ್ಞೆಗಳನು ಅರಸುತಿರುವೆ II</verse>
				<verse number="132">ನಿನ್ನ ನಾಮಪ್ರಿಯರಿಗೆ ಮಾಡುವಂತೆ I ನನಗಭಿಮುಖನಾಗಿ ತೋರು ನೀ ಮಮತೆ II</verse>
				<verse number="133">ನಿನ್ನ ನುಡಿಗನುಸಾರ ದೃಢಪಡಿಸು ನನ್ನ ನಡತೆಯನು I ಕೆಡುಕೊಂದೂ ಅಧೀನಪಡಿಸದಿರಲಿ ನನ್ನನು II</verse>
				<verse number="134">ಜನಶೋಷಣೆಯಿಂದ ಮುಕ್ತಗೊಳಿಸೆನ್ನನು I ಕೈಗೊಳ್ಳುವೆನು ಆಗ ನಿನ್ನ ನಿಯಮಗಳನು II</verse>
				<verse number="135">ತೋರು ನಿನ್ನ ಮುಖದರ್ಶನ ಈ ದಾಸನಿಗೆ I ನೀ ಕಲಿಸು ನಿನ್ನ ನಿಬಂಧನೆಗಳನು ಎನಗೆ II</verse>
				<verse number="136">ನಿನ್ನ ಶಾಸ್ತ್ರವನು ಜನ ಪಾಲಿಸದ ಕಾರಣ I ಹರಿಯುತ್ತಿದೆ ಧಾರೆಯಾಗಿ ನನ್ನ ಕಣ್ಕಣ II</verse>
				<verse number="137">ಹೇ ಪ್ರಭೂ, ನೀನು ಸತ್ಯವಂತ I ನಿನ್ನ ವಿಧಿಯು ನ್ಯಾಯಸಮ್ಮತ II</verse>
				<verse number="138">ಸತ್ಯವಾದುವು ನೀನಿತ್ತ ಕಟ್ಟಳೆಗಳು I ಪೂರ್ಣವಿಶ್ವಾಸನೀಯವಾದುವು ಅವುಗಳು II</verse>
				<verse number="139">ಮರೆತುಬಿಟ್ಟರು ವಿರೋಧಿಗಳು ನಿನ್ನ ವಾಕ್ಯವನು I ಎಂತಲೆ ದಹಿಸುತಿದೆ ಧರ್ಮಾಸಕ್ತಿ ಎನ್ನನು II</verse>
				<verse number="140">ನಿನ್ನ ನುಡಿಯೊಂದೊಂದೂ ಪರಮ ಪರಿಶೋಧಿತ I ಅದರ ಮೇಲಿದೆ ನಿನ್ನ ದಾಸನಿಗೆ ಬಹುಮೋದ II</verse>
				<verse number="141">ನಾನಲ್ಪನು, ತಿರಸ್ಕಾರ ಹೊಂದಿದವನು I ಆದರೂ ಮರೆತಿಲ್ಲ ನಿನ್ನ ನೇಮಗಳನು II</verse>
				<verse number="142">ನಿನ್ನ ನೀತಿ ನಿತ್ಯ I ನಿನ್ನ ಶಾಸ್ತ್ರ ಸತ್ಯ II</verse>
				<verse number="143">ಎರಗಿವೆಯಾದರೂ ಕಷ್ಟ ಸಂಕಟಗಳು I ನನಗಾನಂದಾಯಕ ನಿನ್ನ ಆಜ್ಞೆಗಳು II</verse>
				<verse number="144">ನೀತಿಯುತ ಹಾಗೂ ಶಾಶ್ವತ ನಿನ್ನಾ ಶಾಸನ I ನಾ ಜೀವಿಸುವಂತೆ ದಯಪಾಲಿಸೆನಗೆ ಸುಜ್ಞಾನ II</verse>
				<verse number="145">ಸದುತ್ತರಿಸು ಮನಪೂರ್ವಕವಾಗಿ ಮೊರೆಯಿಡುವೆ I ನಿನ್ನ ನಿಬಂಧನೆಗಳನು ಪ್ರಭು, ಅನುಸರಿಸುವೆ II</verse>
				<verse number="146">ಉದ್ಧರಿಸೆನ್ನನು, ನಿನಗೆ ಮೊರೆಯಿಡುವೆ I ನಿನ್ನ ಕಟ್ಟಳೆಗಳನು ಕೈಗೊಳ್ಳುವೆ II</verse>
				<verse number="147">ಅರುಣೋದಯದಲೆದ್ದು ಮೊರೆಯಿಟ್ಟೆನು I ನಿನ್ನ ವಾಕ್ಯದಲೆ ನಂಬಿಕೆಯಿಟ್ಟೆನು II</verse>
				<verse number="148">ನಿನ್ನ ನುಡಿಯನು ಧ್ಯಾನಿಸಬೇಕೆಂದೇ I ಎಚ್ಚರಗೊಳ್ಳುವೆ ಇರುಳಿನ ಜಾವಕೆ ಮುಂದೆ II</verse>
				<verse number="149">ಪ್ರೀತಿಯಿಂದ ಹೇ ಪ್ರಭೂ, ಕೇಳೆನ್ನ ಮೊರೆಯನು I ನಿನ್ನ ವಿಧಿಗನುಸಾರ ಚೇತನಗೊಳಿಸೆನ್ನನು II</verse>
				<verse number="150">ದುಷ್ಕರ್ಮಿಗಳು ಬಂದಿಹರೆನ್ನ ಸಮೀಪಕ್ಕೆ I ದೂರವಿರುವರು ಅವರು ನಿನ್ನ ಧರ್ಮಶಾಸ್ತ್ರಕೆ II</verse>
				<verse number="151">ಹೇ ಪ್ರಭೂ, ನೀನಿರುವೆ ಹತ್ತಿರ I ನಿನ್ನ ಆಜ್ಞೆಗಳೆಲ್ಲ ಸುಸ್ಥಿರ II</verse>
				<verse number="152">ಸ್ಥಾಪಿಸಿರುವೆ ನಿನ್ನ ಕಟ್ಟಳೆಗಳನು ಶಾಶ್ವತವಾಗಿ I ಮೊದಲಿಂದಲೇ ಇದನರಿತೆ ನಾನವುಗಳ ಮೂಲಕವಾಗಿ II</verse>
				<verse number="153">ನನ್ನ ಕಷ್ಟವ ನೋಡಿ ಮುಕ್ತಗೊಳಿಸೆನ್ನನು I ಮರೆತಿಲ್ಲ ನಾನು ನಿನ್ನ ಧರ್ಮಶಾಸ್ತ್ರವನು II</verse>
				<verse number="154">ನನ್ನ ಪರ ವಾದಿಸಿ, ಬಿಡುಗಡೆ ಮಾಡು ಎನ್ನನು I ನಿನ್ನ ನುಡಿಗನುಸಾರ ಚೇತನಗೊಳಿಸು ನನ್ನನು II</verse>
				<verse number="155">ದೂರವಿದೆ ದುರುಳರಿಗೆ ಆ ಜೀವೋದ್ಧಾರ I ಅವರಿಗಿದೆ ನಿನ್ನ ನಿಬಂಧನೆಗಳ ತಾತ್ಸಾರ II</verse>
				<verse number="156">ನಿನ್ನ ಕೃಪಾಕಾರ್ಯಗಳು, ಹೇ ಪ್ರಭೂ, ಅಪಾರ I ಚೇತನಗೊಳಿಸೆನ್ನನು, ನಿನ್ನ ವಿಧಿಗಳಿಗನುಸಾರ II</verse>
				<verse number="157">ದ್ವೇಷಿಸಿದರು, ಹಿಂಸಿಸಿದರು, ಹಲವರು ನನ್ನನು I ಆದರೂ ಬಿಟ್ಟಿಲ್ಲ ನಾನು ನಿನ್ನ ಕಟ್ಟಳೆಗಳನು II</verse>
				<verse number="158">ಆ ದ್ರೋಹಿಗಳನು ಕಂಡಾಗ ಆಗುತಿದೆ ಅಸಹ್ಯ I ಏಕೆನೆ ನಿನ್ನ ನುಡಿಯಂತೆ ಅವರು ನಡೆಯರಯ್ಯಾ II</verse>
				<verse number="159">ನಿನ್ನ ನೇಮನಿಯಮಗಳು ಪ್ರಭು, ಎನಿತೋ ಪ್ರಿಯ I ಕಾಪಾಡೆನ್ನನು ನಿನ್ನ ಪ್ರೀತಿಗನುಸಾರ II</verse>
				<verse number="160">ಸತ್ಯವೇ ನಿನ್ನ ವಾಕ್ಯದ ಸಾರಾಂಶ I ನಿನ್ನಯ ನೀತಿವಿಧಿಗಳೆಲ್ಲವೂ ಅನಿಶ II</verse>
				<verse number="161">ಪೀಡಿಸುತಿಹರು ನಿಷ್ಕಾರಣವಾಗಿ ರಾಜರುಗಳು I ನಿನ್ನ ವಾಕ್ಯದ ಭೀತಿ ಇಹುದು ನನ್ನ ಹೃದಯದೊಳು II</verse>
				<verse number="162">ಜನರಿಗಾನಂದ ಅನಿರೀಕ್ಷಿತ ಆಸ್ತಿಯಲಿ I ನನಗಾದರೋ ಪರಮಾನಂದ ನಿನ್ನ ನುಡಿಯಲಿ II</verse>
				<verse number="163">ಹಿಡಿಸದು ಎನಗೆ ಮಿಥ್ಯವಾದುದು, ಅದು ಎನಗೆ ಅಸಹ್ಯ I ನಿನ್ನ ಧರ್ಮಶಾಸ್ತ್ರವಾದರೋ ನನಗೆ ಸುಪ್ರಿಯ II</verse>
				<verse number="164">ನೀತಿಯುತ ನಿನ್ನ ವಿಧಿಗಳ ನಿಮಿತ್ತ I ಸ್ತುತಿಪೆ ನಿನ್ನ ದಿನಕ್ಕೆ ಏಳುಕಿತ್ತಾ II</verse>
				<verse number="165">ಅತಿ ನೆಮ್ಮದಿಯುಂಟು ನಿನ್ನ ಶಾಸ್ತ್ರಪ್ರಿಯರಿಗೆ I ವಿಘ್ನಕರವಾದುದೇನೂ ಇರದು ಅಂಥವರಿಗೆ II</verse>
				<verse number="166">ರಕ್ಷಣೆಯನು ಪ್ರಭು, ನಿರೀಕ್ಷಿಸುತ್ತಿರುವೆ I ನಿನ್ನ ಆಜ್ಞೆಗಳನು ನಾನು ಕೈಗೊಂಡಿರುವೆ II</verse>
				<verse number="167">ನಿನ್ನ ಕಟ್ಟಳೆಗಳು ನನಗೆ ಅಧಿಕ ಪ್ರಿಯ I ನನ್ನ ಅಂತರಂಗ ಅವುಗಳಿಗೆ ವಿಧೇಯ I</verse>
				<verse number="168">ಅನುಸರಿಸಿದೆ ನಿನ್ನ ನೇಮನಿಯಮಗಳನೆಲ್ಲ I ನಿನಗೆ ಬಟ್ಟಬಯಲು ನನ್ನ ನಡತೆಯೆಲ್ಲ II</verse>
				<verse number="169">ನನ್ನ ಮೊರೆ ಸೇರಲಿ ಪ್ರಭು, ನಿನ್ನ ಸನ್ನಿಧಿಯ I ನಿನ್ನ ವಾಕ್ಯಾನುಸಾರ ನೀಡು ಜ್ಞಾನೋದಯ II</verse>
				<verse number="170">ನನ್ನ ವಿಜ್ಞಾಪನೆ ಸೇರಲಿ ನಿನ್ನ ಸನ್ನಿಧಿಗೆ I ಉದ್ಧರಿಸೆನ್ನನು ನಿನ್ನ ನುಡಿಗೆ ತಕ್ಕಹಾಗೆ II</verse>
				<verse number="171">ನನಗೆ ಕಲಿಸಿರುವೆ ನಿನ್ನ ನಿಬಂಧನೆಗಳನು I ನನ್ನ ಬಾಯಿ ಉಸುರಲಿ ನಿನ್ನ ಗುಣಗಾನವನು II</verse>
				<verse number="172">ವರ್ಣಿಸಲಿ ನನ್ನ ನಾಲಿಗೆ ನಿನ್ನ ನುಡಿಗಳನು I ನಿನ್ನ ಕೈ ನೀಡಲಿ ನನಗೆ ನೆರವನು II</verse>
				<verse number="173">ಆರಿಸಿಕೊಂಡೆ ನಿನ್ನ ನಿಯಮಗಳನು I ನಿನ್ನ ಕೈ ನೀಡಲಿ ನನಗೆ ನೆರವನು II</verse>
				<verse number="174">ನನಗೆ ಇಷ್ಟ ನೀನು ನೀಡುವ ಜೀವೋದ್ಧಾರ I ನಿನ್ನ ಧರ್ಮಶಾಸ್ತ್ರ ಎನಗೆ ಸಂತೋಷಕರ II</verse>
				<verse number="175">ಉಳಿಸೆನ್ನ ಪ್ರಾಣವನು, ಭಜಿಪೆ ನಿನ್ನನು I ನೀಡಲಿ ಎನಗೆ ನಿನ್ನ ವಿಧಿಗಳು ನೆರವನು II</verse>
				<verse number="176">ಪ್ರಭು, ದಾರಿತಪ್ಪಿದ ಕುರಿ ನಾನು I ಪರಾಂಬರಿಸು ನಿನ್ನ ದಾಸನನು I ಮರೆಯೆನು ನಿನ್ನಾಜ್ಞೆಗಳನು II</verse>
			</chapter>
			<chapter number="120">
				<verse number="1">(ಯಾತ್ರಾಗೀತೆ) ಸಂಕಟದಲಿ ಮೊರೆಯಿಟ್ಟೆನು ಪ್ರಭುವಿಗೆ I ಕೊಟ್ಟನು ಸದುತ್ತರವನು ಆತನೆನಗೆ II</verse>
				<verse number="2">ಬಿಡಿಸೆನ್ನನು ಪ್ರಭು ಸುಳ್ಳುಬಾಯಿಂದ I ವಂಚಿಸುವ ನಾಲಿಗೆ ಉಳ್ಳವರಿಂದ II</verse>
				<verse number="3">ವಂಚಕ ನಾಲಿಗೆಯೆ, ನಿನಗೆ ಸಿಕ್ಕುವುದೇನು? I ನಿನಗೆ ಬಂದೊದಗುವ ಶಿಕ್ಷೆಯಾದರೂ ಏನು? II</verse>
				<verse number="4">ತಟ್ಟುವುವು ಶೂರನ ಹರಿತ ಬಾಣಗಳು I ಗಿಟ್ಟುವುವು ಉರಿಯುವ ಬೆಂಕಿ ಕೆಂಡಗಳು II</verse>
				<verse number="5">ಅಯ್ಯೋ ತಂಗಬೇಕಲ್ಲಾ ಮೇಷೆಕಿನವರ ಮಧ್ಯದಲಿ II ಅಕಟಾ ಇರಬೇಕಲ್ಲಾ ಕೇದಾರಿನ ಪಾಳೆಯಗಳಲಿ II</verse>
				<verse number="6">ಶಾಂತಿಗೆ ಶತ್ರುಗಳಾದವರ ಒಡನಾಟ I ಸಾಕು ಆ ದೀರ್ಘ ಬಾಳಿನ ಸಂಕಟ II</verse>
				<verse number="7">ಶಾಂತಿಪರ ಮಾತು ನನ್ನದು I ಸಮರದ ಕಾತರ ಅವರದು II</verse>
			</chapter>
			<chapter number="121">
				<verse number="1">(ಯಾತ್ರಾಗೀತೆ) ಕಣ್ಣೆತ್ತಿ ನಾ ನೋಡುವೆ ಪರ್ವತದತ್ತ I ಕೇಳುವೆ: “ನನಗೆ ಒತ್ತಾಸೆ ಎತ್ತಣಿಂದ?” II</verse>
				<verse number="2">ನನಗೆ ಒತ್ತಾಸೆ ಪ್ರಭುವಿನಿಂದ I ಭೂಮ್ಯಾಕಾಶ ಸೃಜಿಸಿದವನಿಂದ II</verse>
				<verse number="3">ನಿನ್ನ ಕಾಲೆಡವದಂತೆ ನೋಡುವನಾತ I ತೂಕಡಿಸಲಾರನು ನಿನ್ನ ಕಾಯುವಾತ II</verse>
				<verse number="4">ಇಗೋ, ಇಸ್ರಯೇಲನು ಕಾಯುವಾತನು I ನಿದ್ರಿಸಲಾರನು, ತೂಕಡಿಸಲಾರನು II</verse>
				<verse number="5">ನಿನ್ನನು ಕಾಯುತಿಹನು ಪ್ರಭುವೇ I ಬಲಗಡೆ ನೆರಳಂತಿಹನು ವಿಭುವೇ II</verse>
				<verse number="6">ನಿನ್ನ ಬಾಧಿಸನು ಸೂರ್ಯನು ಹಗಲೊಳು I ನಿನ್ನ ಪೀಡಿಸನು ಚಂದ್ರನು ಇರುಳೊಳು II</verse>
				<verse number="7">ಪ್ರಭು ಕಾಯುವನು ನಿನ್ನ ಪ್ರಾಣವನು I ಸಕಲ ಕೇಡಿನಿಂದ ಕಾಪಾಡುವನು II</verse>
				<verse number="8">ಪ್ರಭು ಕಾಯುವನು ನಿನ್ನ ಆಗುಹೋಗುಗಳನು I ಇಂದಿಗೂ ಎಂದೆಂದಿಗೂ ನಿನ್ನ ಕಾಯುವನು II</verse>
			</chapter>
			<chapter number="122">
				<verse number="1">(ಯಾತ್ರಾಗೀತೆ) ಪ್ರಭುವಿನಾಲಯಕೆ ಹೋಗೋಣ ಬಾ ಎಂದಾಗ I ಆಯಿತೆನಗೆ ಆನಂದ, ಜನರೆನ್ನ ಕರೆದಾಗ II</verse>
				<verse number="2">ನನ್ನ ಕಾಲುಗಳು ಓ ಜೆರುಸಲೇಮೇ I ತಲುಪಿವೆ ನಿನ್ನ ಪುರದ್ವಾರಗಳನೇ II</verse>
				<verse number="3">ನೋಡು, ಜೆರುಸಲೇಮ್ ಪಟ್ಟಣವಿದು I ಗಟ್ಟಿಯಾಗಿಯೆ ಕಟ್ಟಲ್ಪಟ್ಟಿಹುದು II</verse>
				<verse number="4">ಕುಲಗಳು ಯಾತ್ರೆಯಾಗಿ ಬರುವುವು ಇಲ್ಲಿಗೆ I ಮಾಡುವರಿಲ್ಲಿಯೆ ಪ್ರಭುವಿನ ನಾಮ ಕೀರ್ತನೆ I ಪಾಲಿಪರಿಂತು ಇಸ್ರೇಲರಿಗೆ ವಿಧಿಸಿದಾಜ್ಞೆ II</verse>
				<verse number="5">ಸ್ಥಾಪಿತವಾಗಿವೆಯಿಲ್ಲಿ ನ್ಯಾಯಪೀಠಗಳು I ದಾವೀದನ ಮನೆತನದವರ ಸಿಂಹಾಸನಗಳು II</verse>
				<verse number="6">ಜೆರುಸಲೇಮಿನ ಶುಭಕ್ಕಾಗಿ ಮಾಡಿರಿ ಪ್ರಾರ್ಥನೆ I “ಜೆರುಸಲೇಮ್, ನಿನ್ನಭಿಮಾನಿಗಳಿಗೆ ಪ್ರವರ್ಧನೆ II</verse>
				<verse number="7">ಶುಭವಿರಲೀ ನಿನ್ನೀ - ಪೌಳಿಗೋಡೆಗಳೊಳಗೆ” II ಸಂರಕ್ಷಣೆ ಇರಲಿ ನಿನ್ನ ಅರಮನೆಗಳೊಳಗೆ” II</verse>
				<verse number="8">ನನ್ನ ಬಂಧುಬಳಗದವರ ನಿಮಿತ್ತ I “ನಿನಗೆ ಶುಭವಿರಲಿ” ಎಂಬುದು ನನ್ನ ಮತ II</verse>
				<verse number="9">ನಮ್ಮ ಸ್ವಾಮಿದೇವರ ಮಂದಿರದ ನಿಮಿತ್ತ I ಹರಸುವೆ ನಿನ್ನ ಸುಕ್ಷೇಮವನು ಹಾರೈಸುತ II</verse>
			</chapter>
			<chapter number="123">
				<verse number="1">(ಯಾತ್ರಾಗೀತೆ) ಪರಲೋಕದಲಿ ಆಸೀನನಾಗಿರುವ ಪ್ರಭುವೆ I ನನ್ನ ಕಣ್ಣುಗಳನು ನಿನ್ನ ಕಡೆಗೆ ಎತ್ತಿರುವೆ II</verse>
				<verse number="2">ದಾಸನ ಕಣ್ಣು ಯಜಮಾನನತ್ತ I ದಾಸಿಯ ಕಣ್ಣು ಯಜಮಾನಿಯತ್ತ II ನನ್ನ ಕಣ್ಣು ಸ್ವಾಮಿದೇವನತ್ತ I ಆತನ ಕಟಾಕ್ಷವನ್ನು ನಿರೀಕ್ಷಿಸುತ್ತಾ II</verse>
				<verse number="3">ದಯೆತೋರು ಪ್ರಭು, ನಮಗೆ ದಯೆ ತೋರು I ಅತ್ಯಧಿಕವಾಗಿ ನಾವು ತಿರಸ್ಕೃತರು II</verse>
				<verse number="4">ಬೇಸತ್ತಿದೆ ಮನ ಗರ್ವಿಗಳ ನಿಂದೆಯಿಂದ I ಸುಖಭೋಗಿಗಳು ಮಾಡುವ ಅಪಹಾಸ್ಯದಿಂದ II</verse>
			</chapter>
			<chapter number="124">
				<verse number="1">(ಯಾತ್ರಾಗೀತೆ) ಪ್ರಭು ನಮ್ಮ ಪರ ಇಲ್ಲದಿದ್ದರೆ ಏನಾಗುತ್ತಿತ್ತು? I ಇಸ್ರಯೇಲರೇ ಹೇಳಲಿ ಆ ದುರ್ಗತಿಯನ್ನು ಕುರಿತು II</verse>
				<verse number="2">ಪ್ರಭು ನಮ್ಮ ಪರ ಇಲ್ಲದಿದ್ದರೆ ಏನಾಗುತ್ತಿತ್ತು? I ಜನರೆಮಗೆ ವಿರುದ್ಧ ಎದ್ದಾಗ ಏನಾಗುತ್ತಿತ್ತು? II</verse>
				<verse number="3">ಉರಿಗೊಳ್ಳುತಿದ್ದರು ಕಡುಗೋಪದಿಂದ ಖಂಡಿತ I ನುಂಗಿಬಿಡುತ್ತಿದ್ದರು ನಮ್ಮನ್ನು ಜೀವಸಹಿತ II</verse>
				<verse number="4">ಕೊಚ್ಚಿಬಿಡುತ್ತಿತ್ತು ನಮ್ಮನ್ನು ಹುಚ್ಚು ಪ್ರವಾಹ I ಬಡಿದುಬಿಡುತ್ತಿತ್ತು ನಮ್ಮನ್ನು ರಭಸದಿಂದ ಪೂರ I ಮುಳುಗಿಸಿಬಿಡುತ್ತಿತ್ತು ನಮ್ಮನ್ನು ಮಹಾಪ್ರಳಯ II</verse>
				<verse number="5"></verse>
				<verse number="6">ತುತ್ತಾಗಿಸಲಿಲ್ಲ ನಮ್ಮನ್ನು ಶತ್ರುಗಳ ಬಾಯಿಗೆ I ಕೃತಜ್ಞತಾಪೂರ್ವಕ ಸ್ತೋತ್ರ ಇಗೋ ಪ್ರಭುವಿಗೆ II</verse>
				<verse number="7">ಬೇಟೆಬಲೆಯಿಂದ ಪಾರಾದ ಪಕ್ಷಿಯಂತಾದೆವು I ಹರಿದುಹೋಯಿತಿದೊ ಬಲೆಯು, ಹಾರಿಹೋದೆವು ನಾವು II</verse>
				<verse number="8">ನಮಗುದ್ಧಾರ ಪ್ರಭುವಿನ ನಾಮದಲಿ I ಭೂಮ್ಯಾಕಾಶವನು ಸೃಜಿಸಿದಾತನಲಿ II</verse>
			</chapter>
			<chapter number="125">
				<verse number="1">(ಯಾತ್ರಾಗೀತೆ) ಪ್ರಭುವಿನಲಿ ನಂಬಿಕೆ ನಿರೀಕ್ಷೆಯಿಂದಿರುವವರು I ನಿಶ್ಚಲ, ಸುಸ್ಥಿರ, ಗಿರಿ ಸಿಯೋನಿನಂತೆ ಇರುವರು II</verse>
				<verse number="2">ಪರ್ವತಗಳಿರುವಂತೆ ಜೆರುಸಲೇಮಿನ ಸುತ್ತಮುತ್ತಲು I ಇಹನು ಪ್ರಭು ಇಂದಿಗೂ ಎಂದಿಗೂ ತನ್ನ ಜನರ ಸುತ್ತಲು II</verse>
				<verse number="3">ಸಜ್ಜನರ ನಾಡಿನಲಿ ಉಳಿಯದು ದುರ್ಜನರ ದಬ್ಬಾಳಿಕೆ I ಉಳಿಯಿತಾದರೆ ಸಜ್ಜನರೂ ಕೈಹಚ್ಚಬಹುದು ಅಕ್ರಮಕೆ II</verse>
				<verse number="4">ಒಳಿತನು ಮಾಡು ಪ್ರಭು, ಒಳ್ಳೆಯವರಿಗೆ I ಒಳ್ಳೆಯವರಿಗೆ ಮೇಣ್ ನೇರ ಮನಸ್ಕರಿಗೆ II</verse>
				<verse number="5">ಅಕ್ರಮಿಗಳ ದುರ್ಗತಿ ದುರ್ಮಾರ್ಗಿಗಳಿಗೆ I ಶುಭವಾಗಲಿ ಪ್ರಭೂ, ಇಸ್ರಯೇಲರಿಗೆ II</verse>
			</chapter>
			<chapter number="126">
				<verse number="1">(ಯಾತ್ರಾಗೀತೆ) ಸೆರೆಯಿಂದೆಮ್ಮನು ಪ್ರಭು ಸಿಯೋನಿಗೆ ಮರಳಿಸಿದಾಗ I ಅದೊಂದು ಕನಸು ಕಂಡಂತಿತ್ತು ನಮಗೆ ಆವಾಗ II</verse>
				<verse number="2">ಉಕ್ಕಿತಾಗ ಮುಖತುಂಬ ನಗು, ಬಾಯ್ತುಂಬ ಹರ್ಷಗೀತೆ I “ಎಂಥ ಮಹತ್ಕಾರ್ಯವೆಸಗಿದನಾ ಪ್ರಭು ಇವರ ಪರತೆ” I ಇಂತೆಂದು ಆಡಿಕೊಂಡರು ತಂತಮ್ಮೊಳಗೆ ಅನ್ಯಜನತೆ II</verse>
				<verse number="3">ಪ್ರಭು ನಮಗೆ ಮಹತ್ಕಾರ್ಯ ಮಾಡಿದುದು ಖಚಿತ I ಎಂತಲೆ ನಾವಾನಂದಭರಿತರಾಗುವುದು ಉಚಿತ II</verse>
				<verse number="4">ಬತ್ತಿದ ನದಿಯಲಿ ನೀರು ಮರಳಿ ಉಕ್ಕಿ ಹರಿವಂತೆ I ನೀಡು ಸಿರಿ ಸೌಭಾಗ್ಯ, ಹೇ ಪ್ರಭೂ, ನಮಗೆ ಮತ್ತೆ II</verse>
				<verse number="5">ಅಳುತಳುತ್ತಾ ಬಿತ್ತುವವರು I ನಲಿನಲಿಯುತ್ತಾ ಕೊಯ್ಯುವರು II</verse>
				<verse number="6">ದುಃಖಿಸುತ್ತಾ ಬೀಜಬಿತ್ತಲು ಹೋದವನು I ಹರ್ಷಿಸುತ್ತಾ ಕೊಯ್ದು ತರುವನು ತೆನೆಗಳನು II</verse>
			</chapter>
			<chapter number="127">
				<verse number="1">(ಯಾತ್ರಾಗೀತೆ) ಪ್ರಭುವೇ ಮನೆಮಠವನು ಕಟ್ಟದ ಹೊರತು I ಅದನು ಕಟ್ಟುವವರ ಪ್ರಯಾಸ ವ್ಯರ್ಥ II ಪ್ರಭುವೇ ಪಟ್ಟಣವನು ಕಟ್ಟಿದ ಹೊರತು I ಕಾವಲುಗಾರನು ಅದನು ಕಾಯುವುದು ವ್ಯರ್ಥ II</verse>
				<verse number="2">ಹೊಟ್ಟೆಪಾಡಿಗಾಗಿ ಕಷ್ಟಪಡಲೋಸುಗ I ಹೊತ್ತಿಗೆ ಮುಂಚೆ ಎದ್ದೇಳುವುದು ವ್ಯರ್ಥ II ಹೊತ್ತು ಮೀರಿ ಮಲಗಲು ಹೋಗುವುದೂ ವ್ಯರ್ಥ I ನಿದ್ರೆಯಲು ಪ್ರಭುವೇ ಭಕ್ತರ ಪೋಷಕ II</verse>
				<verse number="3">ಪ್ರಭುವಿನಿಂದ ಬಂದ ಸೊತ್ತು - ಪುತ್ರಸಂತಾನ I ಕರುಳ ಕುಡಿಯು ಆತ ನೀಡುವ ಬಹುಮಾನ II</verse>
				<verse number="4">ಯೌವನದಲಿ ಹುಟ್ಟಿದ ಮಕ್ಕಳು I ಯೋಧರ ಕೈಲಿರುವ ಬಾಣಗಳು II</verse>
				<verse number="5">ಭಾಗ್ಯವಂತನು ಅಂಥ ಬಾಣಗಳಿಂದ ಬತ್ತಳಿಕೆ ತುಂಬಿದವನು I ಸೋತುಹೋಗದೆ ನ್ಯಾಯಲಾಯದೊಳೂ ವೈರಿಯೊಡನೆ ವಾದಿಸುವನು II</verse>
			</chapter>
			<chapter number="128">
				<verse number="1">(ಯಾತ್ರಾಗೀತೆ) ಧನ್ಯನು, ಪ್ರಭುವಿನಲಿ ಭಯಭಕ್ತಿಯುಳ್ಳವನು I ಧನ್ಯನು, ಆತನ ಮಾರ್ಗಗಳಲೇ ನಡೆಯುವವನು II</verse>
				<verse number="2">ನಿನ್ನ ಕೈ ಕೆಸರಾದರೆ ಬಾಯಿ ಮೊಸರಾಗುವುದು I ಧನ್ಯನಾಗುವೆ ನೀನು; ನಿನಗೆ ಶುಭವಾಗುವುದು II</verse>
				<verse number="3">ಇರುವಳು ನಿನ್ನ ಪತ್ನಿ ಮನೆಯಲ್ಲಿ ಫಲಭರಿತ ದ್ರಾಕ್ಷಾಲತೆಯಂತೆ I ಕೂರುವರು ನಿನ್ನ ಮಕ್ಕಳು ಊಟದ ಪಂಕ್ತಿಯಲಿ ಓಲಿವ್ ಸಸಿಗಳಂತೆ II</verse>
				<verse number="4">ಹೊಂದುವನು ಅಂತಹ ಆಶೀರ್ವಾದವನು I ಪ್ರಭುವಿನಲಿ ಭಯಭಕ್ತಿಯುಳ್ಳವನು II</verse>
				<verse number="5">ಸಿಯೋನಿನಲ್ಲಿರುವ ಪ್ರಭು ನಿನ್ನನು ಆಶೀರ್ವದಿಸಲಿ I ಜೆರುಸಲೇಮಿನ ಏಳ್ಗೆಯನು ಕಾಣು ಇಡೀ ಜೀವಮಾನದಲಿ II</verse>
				<verse number="6">ಮಕ್ಕಳ ಮಕ್ಕಳನು ನೀನು ಕಾಣುವಂತಾಗಲಿ I ಇಸ್ರಯೇಲಿನ ಮಕ್ಕಳಿಗೆ ಸುಖಶಾಂತಿ ಲಭಿಸಲಿ II</verse>
			</chapter>
			<chapter number="129">
				<verse number="1">(ಯಾತ್ರಾಗೀತೆ) ಯೌವನಾರಭ್ಯ ಶತ್ರುಕಾಡಿದ್ದು ಎಂತೆಂದು I ಇಸ್ರಯೇಲ್ ಜನಾಂಗ ವರದಿ ಮಾಡಲಿ ನಮಗಿಂದು II</verse>
				<verse number="2">ಯೌವನಾರಭ್ಯ ನನ್ನನು ಎನಿತೋ ಬಾಧಿಸಿಹರು I ನನ್ನ ಮೇಲಾದರೋ ಜಯಗಳಿಸಲಿಲ್ಲ ಅವರು II</verse>
				<verse number="3">ಉಳುವವರು ಎನ್ನ ಬೆನ್ನನೆ ಉತ್ತಿರುವರು I ಆಳವಾದ ಗಾಯಗೆರೆಗಳನ್ನು ಮಾಡಿಹರು II</verse>
				<verse number="4">ನಮ್ಮ ಪ್ರಭುವಾದರೋ ಸತ್ಯಸ್ವರೂಪನು I ಕಡಿದಿಹನು ದುರುಳರು ಹಾಕಿದ ಕಟ್ಟುಗಳನು II</verse>
				<verse number="5">ಸಿಯೋನನ್ನು ದ್ವೇಷಿಸುವ ಜನ I ಹಿಂದಿರುಗಲಿ ಪಡೆದು ಅಪಮಾನ II</verse>
				<verse number="6">ಅವರಾಗಲಿ ಮಾಳಿಗೆ ಮೇಲಿನ ಹುಲ್ಲಿನಂತೆ I ಒಣಗಿಹೋಗುವುದದು ಹೂ ಬಿಡುವುದಕ್ಕೆ ಮುಂಚೆ II</verse>
				<verse number="7">ತುಂಬುವುದಿಲ್ಲಾ ಕೊಯ್ಯುವವನ ಹಿಡಿಯು I ಅದರ ಸಿವುಡು ಕಟ್ಟುವವನಾ ಮಡಿಲು II</verse>
				<verse number="8">‘ಪ್ರಭು ನಿನ್ನನು ಆಶೀರ್ವದಿಸಲಿ’ ಎಂಬ ಮಾತನ್ನಾಗಲಿ I ‘ಪ್ರಭು ನಾಮದಲಿ ನಿನಗೆ ಶುಭ’ ಎಂದಾಗಲಿ I ಹಾದುಹೋಗುವ ಜನಜಂಗುಳಿ ಅವರಿಗೆ ಹೇಳದಿರಲಿ” II</verse>
			</chapter>
			<chapter number="130">
				<verse number="1">(ಯಾತ್ರಾಗೀತೆ) ಅಂತರಾಳದಿಂದ ಪ್ರಭು, ಮೊರೆಯಿಡುತ್ತಿರುವೆ ನಿನಗೆ I</verse>
				<verse number="2">ಆಲಿಸು, ಕಿವಿಗೊಡು ಪ್ರಭೂ, ನನ್ನಾರ್ತ ವಿಜ್ಞಾಪನೆಗೆ II</verse>
				<verse number="3">ಪಾಪಗಳ ನೀ ಪಟ್ಟಿಮಾಡಿದೆಯಾದರೆ ಪ್ರಭು I ನಿನ್ನ ಮುಂದೆ ಯಾರುತಾನೆ ನಿಲ್ಲಬಲ್ಲರು ವಿಭು? II</verse>
				<verse number="4">ಪಾಪವನು ಕ್ಷಮಿಸುವವನು ನೀನು I ಎಂತಲೆ ಭಯಭಕ್ತಿಗೆ ಪಾತ್ರನು II</verse>
				<verse number="5">ಪ್ರಭುವಿಗಾಗಿ ಎನ್ನ ಮನ ಕಾದಿದೆ I ಆತನ ವಾಕ್ಯದಲಿ ನಂಬಿಕೆ ನನಗಿದೆ II</verse>
				<verse number="6">ಸೂರ್ಯೋದಯಕ್ಕಾಗಿ ಕಾವಲುಗಾರ ಕಾದಿರುವುದಕ್ಕಿಂತ I ಆತುರದಿಂದ ಬೆಳಗಾಗುವುದನು ಎದುರು ನೋಡುವುದಕ್ಕಿಂತ I ಅತಿಯಾಗಿ ಪ್ರಭುವನು ನಿರೀಕ್ಷಿಸುತಿದೆ ಎನ್ನ ಮನ ನಿರುತ II</verse>
				<verse number="7">ಇಸ್ರಯೇಲೇ, ನಂಬಿಕೊಂಡಿರು ಪ್ರಭುವನೆ I ಆತನಲ್ಲಿದೆ ಕರುಣೆ, ಪೂರ್ಣವಿಮೋಚನೆ II</verse>
				<verse number="8">ಇಸ್ರಯೇಲನು ಉದ್ಧರಿಸುವನಾತ I ಅದು ಗೈದ ಸಕಲ ದೋಷಗಳಿಂದ II</verse>
			</chapter>
			<chapter number="131">
				<verse number="1">(ಯಾತ್ರಾಗೀತೆ) ಹಮ್ಮಿಲ್ಲ ಪ್ರಭು, ನನ್ನೆದೆಯೊಳು I ನನಗಿಲ್ಲ ಸೊಕ್ಕಿನ ಕಣ್ಣುಗಳು II ಶಕ್ತಿಮೀರಿದ ಕಾರ್ಯಕೆ ನಾ ಕೈ ಹಾಕಿಲ್ಲ I ಅಸಾಧ್ಯವಾದುದನು ನಾ ಕೈಗೊಂಡಿಲ್ಲ II</verse>
				<verse number="2">ಎಂದೇ ನನ್ನಾತ್ಮ ಸಮಾಧಾನದಿಂದಿದೆ I ಮೌನದಿಂದಿದೆ ತಾಯ್ಮಡಿಲಾ ಕೂಸಂತೆ I ನೆಮ್ಮದಿಯಿಂದಿದೆ ತಾಯ್ಮಡಿಲಾ ಶಿಶುವಂತೆ II</verse>
				<verse number="3">ಇಸ್ರಯೇಲೆ, ಪ್ರಭುವಿನಲಿ ನಂಬಿಕೆಯಿಂದಿರು I ಇಂದಿಗೂ ಎಂದೆಂದಿಗೂ ಭರವಸೆಯಿಂದಿರು II</verse>
			</chapter>
			<chapter number="132">
				<verse number="1">(ಯಾತ್ರಾಗಿತೆ) ನೆನಸಿಕೋ ಹೇ ಪ್ರಭೂ, ದಾವೀದನನು I ಆತ ಸಹಿಸಿದ ಕಷ್ಟದುಃಖಗಳನು II</verse>
				<verse number="2">ಸ್ಮರಿಸಿಕೊ ಪ್ರಭೂ, ಆತನು ಮಾಡಿದ ಶಪಥವನು I ಯಕೋಬ್ಯ ಘನದೇವನಿಗಾತ ಕೊಟ್ಟ ಈ ಮಾತನು II</verse>
				<verse number="3">“ಪ್ರಭುವಿಗೆ ಆಲಯವೊಂದನು ನಿರ್ಮಿಸುವ ತನಕ I ಯಕೋಬ್ಯ ಘನದೇವನಿಗೆ ಗುಡಿ ಕಟ್ಟುವ ತನಕ II</verse>
				<verse number="4">ನಾ ಸೇರೆನು ನನ್ನರಮನೆಯನು I ನಾ ಏರೆನು ನನ್ನ ಶಯ್ಯೆಯನು II</verse>
				<verse number="5">ಮುಚ್ಚೆನು ನಾನು ಕಣ್ಣುಗಳನು I ಕೂಡಿಸೆನು ನಾನು ರೆಪ್ಪೆಗಳನು” II</verse>
				<verse number="6">ಮಂಜೂಷವನು ಕುರಿತು ಕೇಳಿದೆವು ಎಫ್ರಾತಾದಲಿ I ನಮಗದು ಕಾಣಬಂದಿತು ಆ ಯಹಾರ್ ಮೈದಾನದಲಿ II</verse>
				<verse number="7">ಹೋಗೋಣ ಬನ್ನಿರಿ ಆತನ ಮಂದಿರಕೆ I ಅಡ್ಡಬೀಳೋಣ ಆತನ ಪಾದಪೀಠಕೆ II</verse>
				<verse number="8">ಆಗಮಿಸು ಪ್ರಭು, ನಿನ್ನ ತೇಜೋ ಮಂಜೂಷದೊಡನೆ I ನಿನ್ನಾ ವಾಸಸ್ಥಾನವನು ಬಂದು ಸೇರು ಬೇಗನೆ II</verse>
				<verse number="9">ನೀತಿಭೂಷಿತರಾಗಲಿ ನಿನ್ನ ಯಾಜಕರು I ಆನಂದ ಘೋಷಮಾಡಲಿ ನಿನ್ನ ಭಕ್ತಜನರು II</verse>
				<verse number="10">ನಿನ್ನ ದಾಸ ದಾವೀದನ ಪ್ರಯುಕ್ತ I ತಳ್ಳಲ್ಪಡದಿರಲಿ ನಿನ್ನಾ ಅಭಿಷಿಕ್ತ II</verse>
				<verse number="11">ದಾವೀದನಿಗೆ ಪ್ರಭು ಆಣೆಯಿಟ್ಟು ಇಂತೆಂದ: I ಆಣೆಯಿಟ್ಟು ಕೊಟ್ಟಾ ಮಾತಿಗೆ ತಪ್ಪಲಾರನಾತ: I “ನಿನ್ನ ಸಿಂಹಾಸನದಲಿ ಕೂರಿಸುವೆನು ನಿನ್ನ ತನುಜನೊಬ್ಬನನು” II</verse>
				<verse number="12">“ನನ್ನ ನೇಮನಿಯಮಗಳನು ನಿನ್ನ ಮಕ್ಕಳು ಅನುಸರಿಸುವರಾದರೆ I ಕೂರುವರು ಸದಾಕಾಲ ಅವರ ಮಕ್ಕಳ ನಿನ್ನಾ ಸಿಂಹಾಸನದ ಮೇಲೆ” II</verse>
				<verse number="13">ಆರಿಸಿಕೊಂಡಿಹನು ಪ್ರಭು ಸಿಯೋನ್ ನಗರವನು I ಅಪೇಕ್ಷಿಸಿಹನು ತನ್ನ ನಿವಾಸಕ್ಕಾಗಿ ಅದನು II</verse>
				<verse number="14">“ಎಂದೆಂದಿಗು ಇದೇ ನನ್ನ ನಿವಾಸ I ಇರುವೆನಿಲ್ಲೇ, ಇದು ನನ್ನ ಅಭಿಲಾಶ II</verse>
				<verse number="15">ಇದಕ್ಕೊದಗಿಸುವೆನು ಧಾರಾಳ ಸಿರಿಸಂಪತ್ತನು I ಅನ್ನದಿಂದ ತೃಪ್ತಿಪಡಿಸುವೆನಿಲ್ಲಿಯ ದಲಿತರನು II</verse>
				<verse number="16">ಹೊದಿಸುವೆನಿದರ ಯಾಜಕರಿಗೆ ರಕ್ಷಣಾವಸ್ತ್ರವನು I ಸಾಧುಸಂತರು ಮಾಡುವರಿದರ ಹರ್ಷೋದ್ಗಾರವನು II</verse>
				<verse number="17">ಕೋಡೊಂದು ಮೂಡುವಂತೆ ಮಾಡುವೆ ದಾವೀದನಿಗಿಲ್ಲೆ I ನಂದಾದೀಪ ಬೆಳಗುವಂತೆ ಮಾಡುವೆ ನನ್ನ ಅಭಿಷಿಕ್ತನಿಗಿಲ್ಲೆ II</verse>
				<verse number="18">ತೊಡಿಸುವೆನು ಅವನ ವೈರಿಗಳಿಗೆ ಲಜ್ಜಾಕವಚವನು I ಮುಡಿಸುವೆನು ಅವನಿಗಾದರೋ ಪ್ರಜ್ವಲ ಕಿರೀಟವನು” II</verse>
			</chapter>
			<chapter number="133">
				<verse number="1">(ಯಾತ್ರಾಗೀತೆ) ಸೋದರರು ಒಂದಾಗಿ ಬಾಳ್ವುದು I ಅದೆಷ್ಟು ಚೆನ್ನ, ಅದೆಷ್ಟು ರಮ್ಯ II</verse>
				<verse number="2">ಅದು ರಮ್ಯ, ಸುರಿದ ಸುಗಂಧತೈಲ ಗಡ್ಡಕೆ ಇಳಿವಂತೆ I ಆರೋನನ ಗಡ್ಡದಿಂದ ಅವನ ಕೊರಳಪಟ್ಟಿಗೆ ಇಳಿವಂತೆ II</verse>
				<verse number="3">ರಮ್ಯ, ಹೆರ್ಮೋನ್ ಪರ್ವತದ ಮೇಲೆ ಬೀಳುವ ಮಂಜಿನಂತೆ I ಸಿಯೋನ್ ಪರ್ವತದ ಮೇಲೆ ಬೀಳುವ ಇಬ್ಬನಿಯಂತೆ II ಆಶೀರ್ವಾದವು, ಅಮರ ಜೀವವು I ಅಲ್ಲೆ ಇರಬೇಕೆಂದು ಆಜ್ಞಾಪಿಸಿಹನು ಪ್ರಭುವು II</verse>
			</chapter>
			<chapter number="134">
				<verse number="1">(ಯಾತ್ರಾಗೀತೆ) ಭಜಿಸಿರಿ ಪ್ರಭುವನು ಆತನ ಸಕಲ ಸೇವಕರೇ I ಆತನ ಮಂದಿರದಲಿ ರಾತ್ರಿ ಕಾವಲಿರುವವರೇ II</verse>
				<verse number="2">ಭಜಿಸಿರಿ ಪ್ರಭುವನು ಕರಗಳನೆತ್ತಿ I ಪವಿತ್ರಾಲಯದಲಿ ಕೈಗಳನೆತ್ತಿ II</verse>
				<verse number="3">ಹರಸಲಿ ಸಿಯೋನಿನಿಂದ ನಿಮ್ಮನು I ಭೂಮ್ಯಾಕಾಶಗಳ ಸೃಜಿಸಿದಾತನು II</verse>
			</chapter>
			<chapter number="135">
				<verse number="1">	ಅಲ್ಲೆಲೂಯ I ಭಜಿಸಿರಿ, ಪ್ರಭುವಿನ ಶ್ರೀನಾಮವನು I ಭಜಿಸಿರಿ ಪ್ರಭುವಿನ ದಾಸರೆ, ಆತನನು II</verse>
				<verse number="2">ಕೀರ್ತಿಸಿರಿ ಪ್ರಭುವನು ಆತನ ಮಂದಿರದಲ್ಲಿರುವವರೇ I ನಮ್ಮ ದೇವಾಲಯದ ಪ್ರಾಕಾರದಲ್ಲಿಹ ಸೇವಕರೇ II</verse>
				<verse number="3">ಪ್ರಭು ಒಳ್ಳೆಯವನು, ಆತನಿಗೆ ಸ್ತುತಿಸ್ತೋತ್ರ I ಆತನ ನಾಮವನು ಸ್ತುತಿಸಿರಿ, ಅದು ಮನೋಹರ II</verse>
				<verse number="4">ಆಯ್ದುಕೊಂಡನಾತ ಯಕೋಬ್ಯ ವಂಶವನು I ಸ್ವಕೀಯ ಜನರನ್ನಾಗಿ ಇಸ್ರಯೇಲರನು II</verse>
				<verse number="5">ಗೊತ್ತೆನಗೆ ನಮ್ಮ ಪ್ರಭು ಘನವಂತನೆಂದು I ಸಕಲ ದೇವರುಗಳಿಗಿಂತಲು ಉನ್ನತನೆಂದು I</verse>
				<verse number="6">ಮಾಡುವನು ಪ್ರಭು ತನಗಿಷ್ಟ ಬಂದುದನು I ಭೂಮ್ಯಾಕಾಶ, ಸಮುದ್ರ ಸಾಗರದೊಳು II</verse>
				<verse number="7">ಏಳಮಾಡುವನು ದಿಗಂತದೊಳು ಮೋಡವನು I ಹೊಳೆಯಮಾಡುವನು ಮಳೆಗೋಸ್ಕರ ಮಿಂಚನು I ಬೀಸಮಾಡುವನು ಉಗ್ರಾಣದಿಂದ ಗಾಳಿಯನು II</verse>
				<verse number="8">ಕೊಂದನು ಚೊಚ್ಚಲುಗಳನು ಈಜಿಪ್ಟಿನೊಳು I ಮನುಷ್ಯರೊಳು, ಪಶುಪ್ರಾಣಿಗಳೊಳು II</verse>
				<verse number="9">ಓ ಈಜಿಪ್ಟೆ, ನಿನ್ನೊಳು ಮಾಡಿದನು ಅದ್ಭುತ ಪವಾಡಗಳನು I ಫರೋಹನ ಮೇಣ್ ಅವನ ಸೇವಕರ ವಿರುದ್ಧ ಗೈದನವುಗಳನು II</verse>
				<verse number="10">ಕೆಡವಿಬಿಟ್ಟನಾತ ದೊಡ್ಡ ರಾಷ್ಟ್ರಗಳನು I ಕೊಂದುಹಾಕಿದನಾತ ಬಲಿಷ್ಠರಾಜರನು II</verse>
				<verse number="11">ನಿರ್ಮೂಲ ಮಾಡಿದನಾತ ಅಮೋರ್ಯರ ಸೀಹೋನ್ ರಾಜನನು I ಬಾಷಾನಿನ ಅರಸ ಓಗನನು, ಕಾನಾನಿನ ರಾಜ್ಯಗಳೆಲ್ಲವನು II</verse>
				<verse number="12">ಕೊಟ್ಟನು ಅವರ ನಾಡನು ಇಸ್ರಯೇಲರಿಗೆ I ಅದು ಸ್ವಂತ ಸೊತ್ತಾಯಿತು ಆತನಾ ಪ್ರಜೆಗೆ II</verse>
				<verse number="13">ನಿನ್ನ ನಾಮ ಪ್ರಭು ಶಾಶ್ವತ I ನಿನ್ನ ಸ್ಮರಣೆಯೂ ಅನವರತ II</verse>
				<verse number="14">ದೊರಕಿಸುವನು ಪ್ರಭು ನ್ಯಾಯವನು ತನ್ನ ಪ್ರಜೆಗೆ I ತೋರುವನು ಅನುಕಂಪವನು ತನ್ನ ಭಕ್ತಾದಿಗಳಿಗೆ II</verse>
				<verse number="15">ರಾಷ್ಟ್ರಗಳ ವಿಗ್ರಹಗಳು ಬರೀ ಬೆಳ್ಳಿಬಂಗಾರ I ಅವುಗಳೆಲ್ಲ ಮಾನವನ ಕೈಕೆಲಸಗಳು ಮಾತ್ರ II</verse>
				<verse number="16">ಬಾಯಿದ್ದರೂ ಅವು ಮಾತನಾಡುವುದಿಲ್ಲ I ಕಣ್ಣುಗಳಿದ್ದರೂ ಅವು ನೋಡುವುದಿಲ್ಲ II</verse>
				<verse number="17">ಕಿವಿಯಿದ್ದರೂ ಅವು ಕೇಳುವುದಿಲ್ಲ I ಅವುಗಳ ಬಾಯಲ್ಲಿ ಉಸಿರೇ ಇಲ್ಲ II</verse>
				<verse number="18">ಅವುಗಳಂತಾಗುವರು ಅವುಗಳನ್ನು ಮಾಡುವವರು I ಅವುಗಳಂತಾಗುವರು ಅವುಗಳನ್ನು ನಂಬುವವರು II</verse>
				<verse number="19">ಇಸ್ರಯೇಲಿನ ಗೋತ್ರವೇ, ಭಜಿಸು ಪ್ರಭುವನು I ಆರೋನನ ವಂಶವೇ, ಭಜಿಸು ಆ ವಿಭುವನು II</verse>
				<verse number="20">ಲೇವಿಯರ ಮನೆತನವೇ, ಭಜಿಸು ಪ್ರಭುವನು I ಪ್ರಭುವಿನ ಭಕ್ತರೇ, ಭಜಿಸಿ ಆ ವಿಭುವನು II</verse>
				<verse number="21">ಜೆರುಸಲೇಮಿನಲ್ಲಿ ವಾಸಿಸುವ ಪ್ರಭು ಘನಹೊಂದಲಿ I ಆತನ ಕೀರ್ತಿ ಸಿಯೋನಿನಿಂದ ಹಬ್ಬಿಹರಡಲಿ I ಅಲ್ಲೆಲೂಯ! II</verse>
			</chapter>
			<chapter number="136">
				<verse number="1">ಒಳ್ಳೆಯವನಾದ ಪ್ರಭುವಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.</verse>
				<verse number="2">ದೇವಾದಿ ದೇವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.</verse>
				<verse number="3">ಮಹೋನ್ನತ ಪ್ರಭುವಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.</verse>
				<verse number="4">ಮಹತ್ಕಾರ್ಯವೆಸಗಬಲ್ಲ ಆ ಏಕೈಕನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.</verse>
				<verse number="5">ಜ್ಞಾನದಿಂದ ಜಗವನು ನಿರ್ಮಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.</verse>
				<verse number="6">ಜಲರಾಶಿಯ ಮೇಲೆ ಭೂಮಿಯನು ಹಾಸಿದವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.</verse>
				<verse number="7">ಮಹಾ ಜ್ಯೋತಿರ್ಮಂಡಲವನು ಸೃಷ್ಟಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.</verse>
				<verse number="8">ಹಗಲನ್ನಾಳಲು ಸೂರ್ಯನನ್ನು ಸೃಜಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.</verse>
				<verse number="9">ರಾತ್ರಿಯನ್ನಾಳಲು ಚಂದ್ರ ನಕ್ಷತ್ರಗಳನ್ನು ಸೃಷ್ಟಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.</verse>
				<verse number="10">ಈಜಿಪ್ಟಿನ ಚೊಚ್ಚಲುಗಳನು ಸಂಹರಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.</verse>
				<verse number="11">ಇಸ್ರಯೇಲರನು ಅಲ್ಲಿಂದ ಹೊರತಂದವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.</verse>
				<verse number="12">ಭುಜಬಲದಿಂದ ಕೈಚಾಚಿ ಅವರನು ಬಿಡಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.</verse>
				<verse number="13">ಕೆಂಪು ಕಡಲನು ಇಬ್ಭಾಗಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.</verse>
				<verse number="14">ಇಸ್ರಯೇಲರನು ಅದರ ನಡುವೆ ದಾಟಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.</verse>
				<verse number="15">ಫರೋಹನನ್ನೂ ಅವನ ಸೈನ್ಯವನ್ನೂ ಆ ಕಡಲಲ್ಲಿ ಮುಳುಗಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.</verse>
				<verse number="16">ತನ್ನ ಪ್ರಜೆಯನು ಅರಣ್ಯಮಾರ್ಗವಾಗಿ ಕರೆತಂದವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.</verse>
				<verse number="17">ಬಲವಂತ ರಾಜರನು ಉರುಳಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.</verse>
				<verse number="18">ಪ್ರಖ್ಯಾತ ರಾಜರನ್ನು ಸಂಹರಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.</verse>
				<verse number="19">ಅಮೋರಿಯರ ರಾಜನಾದ ಸೀಹೋನನ್ನು ಕೊಂದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.</verse>
				<verse number="20">ಬಾಷಾನಿನ ಅರಸನಾದ ಓಗನನ್ನು ಸಂಹರಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.</verse>
				<verse number="21">ಅವರ ನಾಡನ್ನು ಇಸ್ರಯೇಲರಿಗೆ ಕೊಟ್ಟಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.</verse>
				<verse number="22">ಅದನ್ನು ದಾಸರಾದ ನಮಗೆ ಸೊತ್ತಾಗಿ ನೀಡಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.</verse>
				<verse number="23">ಹೀನ ಸ್ಥಿತಿಯಲ್ಲಿದ್ದ ನಮ್ಮನ್ನು ಜ್ಞಾಪಿಸಿಕೊಂಡಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.</verse>
				<verse number="24">ಶತ್ರುಹಗೆಗಳಿಂದ ನಮ್ಮನ್ನು ಬಿಡಿಸಿದಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.</verse>
				<verse number="25">ಸಕಲ ಜೀವಿಗಳಿಗೆ ಆಹಾರ ನೀಡುವಾತನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.</verse>
				<verse number="26">ಪರಲೋಕದಲ್ಲಿರುವ ದೇವನಿಗೆ ಧನ್ಯವಾದ, ಆತನ ಪ್ರೀತಿ ಶಾಶ್ವತ.</verse>
			</chapter>
			<chapter number="137">
				<verse number="1">ಬಾಬಿಲೋನಿನ ನದಿಗಳ ತೀರದಲಿ ಕುಳಿತು I ಅತ್ತು ಪ್ರಲಾಪಿಸಿದೆವು ಸಿಯೋನನ್ನು ನೆನೆದು II</verse>
				<verse number="2">ಆ ನಾಡಿನಲಿ ಕಿನ್ನರಿಗಳನ್ನೆ ತೂಗುಹಾಕಿದೆವು I ನೀರವಂಜಿ ಮರಗಳಿಗೆ ಅವನ್ನು ನೇತುಹಾಕಿದೆವು II</verse>
				<verse number="3">ಸೆರೆಹಿಡಿದು ಬಂಧಿಸಿದಾ ಜನ ಈ ಪರಿ ಪೀಡಿಸಿದರೆಮ್ಮನು: I “ಹಾಡಿ, ನಮ್ಮ ವಿನೋದಕ್ಕಾಗಿ ಸಿಯೋನಿನ ಗೀತೆಗಳಲೊಂದನು” II</verse>
				<verse number="4">ಪ್ರಭುಗೀತೆಗಳ ನಾವು ಗಾನ ಮಾಡುವುದೆಂತು I ಅನ್ಯನಾಡಿನೊಳು ಅವುಗಳನು ಹಾಡುವುದೆಂತು II</verse>
				<verse number="5">ಜೆರುಸಲೇಮ್, ನಾನು ನಿನ್ನ ಮರೆತಲ್ಲಿ I ನನ್ನ ಬಲಹಸ್ತ ಬತ್ತಿಹೋಗಿಬಿಡಲಿ II</verse>
				<verse number="6">ಜೆರುಸಲೇಮನು ನಾ ಸ್ಮರಣೆಮಾಡದಿದ್ದಲ್ಲಿ I ಆ ಸ್ಮರಣೆ ಸರ್ವೋತ್ತಮ ನಲಿವು ನನಗಾಗದಿದ್ದಲ್ಲಿ I ಸೇದಿಹೋಗಲಿ ನಾಲಿಗೆ ನನ್ನ ಬಾಯಲಿ II</verse>
				<verse number="7">ನೆನೆಸಿಕೊ ಪ್ರಭು, ಜೆರುಸಲೇಮಿನ ನಾಶನದಿನ ಅವರಾಡಿದ್ದನು: I “ಕೆಡವಿ ನೆಲಕೆ, ಬುಡಸಹಿತ ಕೆಡವಿ” ಎಂದಾ ಅಧಮ ಎದೋಮ್ಯರನು II</verse>
				<verse number="8">ಬಾಬಿಲೋನ್ ನಗರವೇ ಕೇಳು: ಅಳಿವು ಕಾದಿದೆ ನಿನಗೆ I ಭಲೆ, ನೀನೆಮಗೆ ಮಾಡಿದ್ದಕ್ಕೆ ಮುಯ್ ತೀರಿಸುವವಗೆ I ನಿನ್ನ ಮಕ್ಕಳನೆತ್ತಿ ಬಂಡೆಗಪ್ಪಳಿಸುವವನಿಗೆ II</verse>
			</chapter>
			<chapter number="138">
				<verse number="1">ಹೃದಯಪೂರ್ವಕ ವಂದನೆ ಪ್ರಭು ನಿನಗೆ I ದೇವರುಗಳೆದುರಿಗೆ ನನ್ನ ಕೀರ್ತನೆ ನಿನಗೆ II</verse>
				<verse number="2">ಪೊಗಳುವೆ ನಿನ್ನ ನಾಮವನು ತಲೆಬಾಗಿ ನಿನ್ನ ಪವಿತ್ರಾಲಯದತ್ತ I ನಿನ್ನ ಪ್ರೀತಿಸತ್ಯತೆಗಳ, ನಾಮ ನುಡಿಗಳ ಮಹತ್ವದ ಪ್ರಯುಕ್ತ II</verse>
				<verse number="3">ಮೊರೆಯಿಟ್ಟಾಗ ದಯಪಾಲಿಸಿದೆ ಸದುತ್ತರವನು I ಅಧಿಕಮಾಡಿದೆ ನೀನು ನನ್ನಾತ್ಮ ಶಕ್ತಿಯನು II</verse>
				<verse number="4">ನಿನ್ನ ಗುಣಗಾನ ಮಾಳ್ಪರು ಪ್ರಭು, ಭೂರಾಜರೆಲ್ಲರು I ಏಕೆನೆ, ನೀ ಉಸುರಿದ ನುಡಿಗಳನು ಕೇಳ್ವರವರೆಲ್ಲರು II</verse>
				<verse number="5">ಪ್ರಭುವಿನ ಮಹಿಮೆಯು ಮಹೋನ್ನತ ಎನ್ನುವರು I ಆತನ ಮಾರ್ಗಗಳನು ಹಾಡಿ ಹರಸುವರು II</verse>
				<verse number="6">ಉನ್ನತನಾದರೂ ಗಮನಿಸುವನು ಪ್ರಭು ದೀನರನು I ದೂರದಿಂದಲೇ ಗುರುತಿಸುವನಾತನು ಗರ್ವಿಷ್ಠರನು II</verse>
				<verse number="7">ಇಕ್ಕಟ್ಟಿನಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭು, ಪ್ರಾಣವನು I ಶತ್ರುಕೋಪಕೆ ವಿರುದ್ಧವಾಗಿ ತೋರುವೆ ನೀ ಮುಷ್ಟಿಯನು II</verse>
				<verse number="8">ಸಿದ್ಧಿಗೆ ತರುವೆ ನೀ ಪ್ರಭು, ನನ್ನ ಕಾರ್ಯವನು I ಶಾಶ್ವತವಾಗಿಸು ನಿನ್ನ ಅಚಲ ಪ್ರಿತಿಯನು I ಮರೆತುಬಿಡಬೇಡ ನಿನ್ನಯ ಕೈ ಕೃತಿಯನು II</verse>
			</chapter>
			<chapter number="139">
				<verse number="1">ಪ್ರಭು, ಪರಿಶೋಧಿಸಿರುವೆ ನೀ ನನ್ನನು I ಅರಿತುಕೊಂಡಿರುವೆ ಅಂತರಂಗವನು II</verse>
				<verse number="2">ನಾ ಕೂರುವುದೂ ಏಳುವುದೂ ನಿನಗೆ ಗೊತ್ತಿದೆ I ನನ್ನಾಲೋಚನೆ ದೂರದಿಂದಲೇ ನಿನಗೆ ತಿಳಿದಿದೆ II</verse>
				<verse number="3">ನನ್ನ ನಡೆಯನು, ನಿದ್ರೆಯನು ನೀ ಬಲ್ಲಾತ I ನನ್ನ ನಡತೆಯೆಲ್ಲವು ನಿನಗೆ ಸುಪರಿಚಿತ II</verse>
				<verse number="4">ಪ್ರಭು, ನಾ ಮಾತೆತ್ತುವುದಕ್ಕೆ ಮುಂಚಿತವಾಗಿ I ತಿಳಿದುಹೋಗಿದೆ ಎಲ್ಲ ನಿನಗೆ ಪೂರ್ತಿಯಾಗಿ II</verse>
				<verse number="5">ನನ್ನ ಹಿಂದೆಯೂ ಮುಂದೆಯೂ ನೀನಿರುವೆ I ಅಭಯ ಹಸ್ತವನು ನನ್ನ ಮೇಲಿರಿಸಿರುವೆ II</verse>
				<verse number="6">ನನ್ನ ಕುರಿತು ನಿನಗಿರುವ ಅರಿವು ಅಗಾಧ I ನನ್ನ ಬುದ್ಧಿಗದು ಸಿಲುಕದಷ್ಟು ಉನ್ನತ II</verse>
				<verse number="7">ನಾನೆಲ್ಲಿಗೆ ಹೋಗಲು ಸಾಧ್ಯ, ನಿನ್ನಾತ್ಮನಿಂದ ತಪ್ಪಿಸಿಕೊಳ್ಳಲು? I ನಾನೆಲ್ಲಿಗೆ ಓಡಲು ಸಾಧ್ಯ, ನಿನ್ನ ಸನ್ನಿಧಿಯಿಂದ ಮರೆಯಾಗಲು? II</verse>
				<verse number="8">ಆಕಾಶಕೆ ನಾನೇರಿದರೂ ನೀನಿರುವೆ ಅಲ್ಲಿ I ಪಾತಾಳದಲಿ ನಾ ನಿದ್ರಿಸಿದರೂ ನೀನಿರುವೆ ಅಲ್ಲಿ II</verse>
				<verse number="9">ನಾನರುಣನ ರೆಕ್ಕೆಗಳನೇರಿ ಹಾರಿದರೂ I ಸಮುದ್ರ ಕಟ್ಟಕಡೆಗಳಲಿ ನಾ ಸೇರಿದರೂ II</verse>
				<verse number="10">ಅಲ್ಲೂ ನನ್ನ ನಡೆಸುವುದು ನಿನ್ನ ಕೈ I ನನ್ನ ಹಿಡಿದಿರುವುದು ನಿನ್ನ ಬಲಗೈ II</verse>
				<verse number="11">“ಕಾರ್ಗತ್ತಲೆನ್ನ ಕವಿಯಲಿ” ಎಂದರೂ I “ಸುತ್ತಲ ಬೆಳಕು ಇರುಳಾಗಲಿ” ಎಂದರೂ II</verse>
				<verse number="12">ಕತ್ತಲು ಕತ್ತಲಲ್ಲ ನಿನಗೆ I ಇರುಳೂ ಹಗಲಾಗಿದೆ ನಿನಗೆ I ಕತ್ತಲು, ಬೆಳಕು - ಒಂದೇ ನಿನಗೆ II</verse>
				<verse number="13">ನನ್ನ ಅಂತರಂಗವನು ಉಂಟುಮಾಡಿದಾತ ನೀನು I ತಾಯಗರ್ಭದಲೆ ನನ್ನ ರೂಪಿಸಿದಾತ ನೀನು II</verse>
				<verse number="14">ನಿನಗೆ ವಂದನೆ, ನೀ ನನ್ನ ಭಯಭಕ್ತಿಗೆ ಪಾತ್ರ I ನಿನ್ನ ಕೃತ್ಯಗಳು ಅದ್ಭುತಕರ ಹಾಗೂ ವಿಚಿತ್ರ I ನನ್ನ ಬಗ್ಗೆ ನಿನಗಿರುವ ಪೂರ್ಣ ಅರಿವು ಸಮರ್ಥ II</verse>
				<verse number="15">ನನ್ನ ಅಸ್ಥಿಪಂಜರವನು ರೂಪಿಸುವಾಗ I ತಾಯಗರ್ಭದೊಳು ಅಚ್ಚರದಿ ರಚಿಸುವಾಗ I ಗುಟ್ಟಾಗಿ ನಾನಲ್ಲಿ ಬೆಳೆಯುತ್ತಿದ್ದಾಗ I ಮರೆಯಾಗಿರಲಿಲ್ಲ ನಾನು ನಿನಗಾಗ II</verse>
				<verse number="16">ನಾನಿನ್ನೂ ಭ್ರೂಣವಾಗಿದ್ದಾಗ ನೋಡಿದವು ನಿನ್ನ ಕಣ್ಣುಗಳು I ಪ್ರಾರಂಭವಾಗುವುದಕ್ಕೆ ಮುನ್ನ ನನ್ನ ಆಯುಷ್ಕಾಲದ ದಿನಗಳು I ಲಿಖಿತವಾದವು ಅವುಗಳಲೊಂದೂ ತಪ್ಪದೆ ನಿನ್ನ ಪುಸ್ತಕದೊಳು II</verse>
				<verse number="17">ದೇವಾ, ನಿನ್ನ ಯೋಚನೆಗಳೆಷ್ಟು ಅಮೂಲ್ಯ I ಅವುಗಳೆಷ್ಟು ಅಸಂಖ್ಯ, ನನಗದೆಷ್ಟು ಅಗಣ್ಯ II</verse>
				<verse number="18">ಎಣಿಕೆಗೆ ಅವುಗಳ ಸಂಖ್ಯೆ ಸಮುದ್ರತೀರದ ಮರಳಿನಂತೆ I ಎಚ್ಚತ್ತು ಎಣಿಸಲೆತ್ನಿಸೆ ನಿನ್ನ ಮುಂದಿರುವೆ ಮುಂಚಿನಂತೆ II</verse>
				<verse number="19">ದೇವಾ, ದುಷ್ಟರನು ಸಂಹರಿಸಿಬಿಟ್ಟರೆ ಎಷ್ಟೋ ಉಚಿತ I ಕೊಲೆಪಾತಕರು ನನ್ನಿಂದ ತೊಲಗಿಹೋದರೆ ಎಷ್ಟೋ ಹಿತ II</verse>
				<verse number="20">ಅವರಾಡುವ ಮಾತುಗಳು ನಿನಗೆ ವಿರೋಧ I ಹಗೆಗಳನು ಎತ್ತಿಕ್ಕುವರು ನಿನಗೆ ವಿರುದ್ಧ II</verse>
				<verse number="21">ಪ್ರಭು, ನಿನ್ನ ದ್ವೇಷಿಗಳನು ನಾ ದ್ವೇಷಿಸದಿರುವೆನೆ? I ನಿನ್ನ ವಿರೋಧಿಗಳನ್ನು ನಾ ತಿರಸ್ಕಾರ ಮಾಡದಿರುವೆನೆ? II</verse>
				<verse number="22">ಹಗೆಮಾಡುವೆನವರನು ಸಂಪೂರ್ಣವಾಗಿ I ಭಾವಿಸುವೆನವರನು ನನ್ನ ವೈರಿಗಳನ್ನಾಗಿ II</verse>
				<verse number="23">ತಿಳಿದುಕೋ ದೇವಾ, ನನ್ನ ಹೃದಯವನು ಪರೀಕ್ಷಿಸಿ I ಅರಿತುಕೋ ನನ್ನ ಆಲೋಚನೆಗಳನು ಪರಿಶೋಧಿಸಿ II</verse>
				<verse number="24">ಕೇಡಿದೆಯೇ ನೋಡು ನನ್ನ ಮಾರ್ಗದಲಿ I ನಡೆಸೆನ್ನನು ಆ ಸನಾತನ ಪಥದಲಿ II</verse>
			</chapter>
			<chapter number="140">
				<verse number="1">ಬಿಡಿಸೆನ್ನನು ಪ್ರಭು ಕೆಡುಕರಿಂದ I ಕಾಪಾಡೆನ್ನನು ಹಿಂಸಕರಿಂದ II</verse>
				<verse number="2">ಕೇಡನು ಕಲ್ಪಿಸುತ್ತಾರವರು ಮನದೊಳು I ಕಲಹವೆಬ್ಬಿಸುತ್ತಾರೆ ಯಾವಾಗಲೂ II</verse>
				<verse number="3">ಅವರ ನಾಲಗೆಯು ಸರ್ಪದಂತೆ I ಹಾವಿನ ವಿಷ ಅವರ ತುಟಿ ಹಿಂದೆ II</verse>
				<verse number="4">ಪ್ರಭು, ತಪ್ಪಿಸೆನ್ನನು ದುಷ್ಟರ ಕೈಯಿಂದ I ಕಾಪಾಡಿ ರಕ್ಷಿಸೆನ್ನನು ಹಿಂಸಕರಿಂದ I ನಾನೆಡವುದನೇ ನಿರೀಕ್ಷಿಸುವವರಿಂದ II</verse>
				<verse number="5">ಒಡ್ಡಿದರು ಗರ್ವಿಗಳು ಗುಪ್ತವಾಗಿ I ಉರುಲನು, ಪಾಶಗಳನು ನನಗಾಗಿ I ಬಲೆಹಾಸಿದರು ದಾರಿಗೆ ಅಡ್ಡವಾಗಿ II</verse>
				<verse number="6">“ನೀನೆ ನನ್ನ ದೇವರು” ಎಂದೆ ಪ್ರಭುವಿಗೆ I ಕಿವಿಗೊಡೆಂದು ಕೇಳಿದೆ, ನನ್ನ ವಿಜ್ಞಾಪನೆಗೆ II</verse>
				<verse number="7">ಸ್ವಾಮಿದೇವಾ, ನೀನೆನಗೆ ದುರ್ಗಸ್ಥಾನ I ರಣರಂಗದಲಿ ನೀನೆನಗೆ ಶಿರಸ್ತ್ರಾಣ II</verse>
				<verse number="8">ನೆರವೇರಿಸಬೇಡ ದುರುಳರ ಕೋರಿಕೆಯನು I ಕೈಗೂಡಿಸಬೇಡ ಪ್ರಭು, ಅವರ ಕುಯುಕ್ತಿಯನು II</verse>
				<verse number="9">ನನ್ನನ್ನು ಸುತ್ತುವರೆದಿರುವವರು ತಲೆಯೆತ್ತದಿರಲಿ I ಅವರಾಡುವ ಕೇಡು ಅವರ ತಲೆಯ ಮೇಲೇ ಎರಗಲಿ II</verse>
				<verse number="10">ಸುರಿಯಲಿ ಆ ಜನರ ಮೇಲೆ ಉರಿಉರಿವ ಬೆಂಕಿಕೆಂಡ I ಅವರೇಳದಂತೆ ಸೇರಲಿ ಪಾತಾಳದ ಅಗ್ನಿಕುಂಡ II</verse>
				<verse number="11">ಉಳಿಯದಿರಲಿ ನಾಡೊಳು ಚಾಡಿಕೋರರು I ಕೇಡಿಂದ ನಾಶವಾಗಲಿ ಹಿಂಸಕರು II</verse>
				<verse number="12">ಪ್ರಭು ನೀ ದೀನದಲಿತರ ವಕೀಲನೆಂದು ನಾ ಬಲ್ಲೆ I ಬಡವರಿಗೆ ನ್ಯಾಯ ದೊರಕಿಸುವವ ನೀ ಅಲ್ಲವೆ? II</verse>
				<verse number="13">ಭಜಿಸುವರು ಸಜ್ಜನರು ನಿನ್ನಾ ಸಿರಿನಾಮವನು I ಬಾಳ್ವರು ಸುಮನಸ್ಕರು ಬಿಡದೆ ನಿನ್ನ ಸನ್ನಿಧಿಯನು II</verse>
			</chapter>
			<chapter number="141">
				<verse number="1">ಬೇಗನೆ ಬಾ ಪ್ರಭು, ಮೊರೆಯಿಡುವೆ ನಿನಗೆ I ಮೊರೆಯಿಡುವಾಗಲೆಲ್ಲ ಕಿವಿಗೊಡು ನನಗೆ II</verse>
				<verse number="2">ಸಮರ್ಪಕವಾಗಲಿ ನನ್ನ ಪ್ರಾರ್ಥನೆ ಧೂಪಾರತಿಯಂತೆ I ಕೈಮುಗಿದು ಮಾಡುವ ವಂದನೆ ಸಂಧ್ಯಾಬಲಿಯರ್ಪಣೆಯಂತೆ II</verse>
				<verse number="3">ಕಾವಲಿರಿಸು ಪ್ರಭು ನನ್ನ ಬಾಯಿಗೆ I ಪಹರೆಯಿರಲಿ ನನ್ನ ತುಟಿ ಕದಗಳಿಗೆ II</verse>
				<verse number="4">ಮಾಡು ನನ್ನ ಹೃದಯ ದುರಾಚಾರವನು ಮೆಚ್ಚದಂತೆ I ಕಾಪಾಡು ದುರ್ಜನರೊಡಗೂಡಿ ಕೇಡನು ಮಾಡದಂತೆ I ನೋಡು ದುರುಳರೌತಣಗಳಲಿ ನಾ ಪಾಲ್ಗೊಳ್ಳದಂತೆ II</verse>
				<verse number="5">ಸಜ್ಜನರು ವಿಧಿಸುವಾ ಶಿಕ್ಷೆ ಎನಗೆ ಕಟಾಕ್ಷ I ದುರ್ಜನರಿಂದ ನನಗಾಗದಿರಲಿ ಅಭಿಷೇಕ I ಸತತ ಪ್ರಾರ್ಥಿಸುವೆ ಆ ದುಷ್ಕೃತ್ಯಗಳ ವಿರುದ್ಧ II</verse>
				<verse number="6">ದುರುಳರ ಒಡೆಯರು ಶಿಖರದಿಂದ ಬಿದ್ದಾಗ ಕೆಳಕೆ I ನನ್ನ ಮಾತು ಯಥಾರ್ಥವೆಂದು ಜನ ಕಿವಿಗೊಡುವರೆನಗೆ II</verse>
				<verse number="7">ಉತ್ತ ಹೊಲದ ಹೆಂಟೆಗಳನು ಒಡೆದು ಚದರಿಸುವ ಹಾಗೆ I ಎರಚಲಾಗುವುದು ಅವರ ಎಲುಬುಗಳನು ಸನರಕದ ಬಾಯಿಗೆ II</verse>
				<verse number="8">ಹೇ ಪ್ರಭೂ, ದೇವಾ, ನನ್ನ ದೃಷ್ಟಿ ನಿನ್ನ ಮೇಲಿದೆ I ವಿನಾಶಕೊಪ್ಪಿಸಬೇಡೆನ್ನ, ನಿನ್ನಾಶ್ರಯ ಕೋರಿರುವೆ II</verse>
				<verse number="9">ಕಾಪಾಡು ಕೆಡುಕರೊಡ್ಡಿದ ಉರುಲಿನಿಂದ I ತಪ್ಪಿಸೆನ್ನನು ಅವರಿಟ್ಟ ಬೋನಿನಿಂದ II</verse>
				<verse number="10">ದುರುಳರೊಡ್ಡಿದ ಉರುಲಲಿ ಆ ದುರುಳರೆ ಸಿಕ್ಕಿಬೀಳಲಿ I ನಾನಾದರೊ ನುಗ್ಗಿ ನಡೆವೆನು ಸುರಕ್ಷಿತವಾಗಿಯೆ ಅಲ್ಲಿ II</verse>
			</chapter>
			<chapter number="142">
				<verse number="1">ಮೊರೆಯಿಡುವೆನು ನಾನು ಪ್ರಭುವಿಗೆ I ಸ್ವರವೆತ್ತಿ ಬೇಡುವೆನು ಆತನಿಗೆ II</verse>
				<verse number="2">ಬಿಚ್ಚುವೆನು ಆತನ ಮುಂದೆ ಚಿಂತೆಯ ಕಟ್ಟನು I ಅರಿಕೆ ಮಾಡುವೆನು ನನ್ನ ಕಷ್ಟ ಸಂಕಟವನು II</verse>
				<verse number="3">ಉರುಲೊಡ್ಡಿಹರು ನಾ ನಡೆಯುವ ಮಾರ್ಗದಲೆ I ನಾ ಮನಗುಂದಿರೆ, ಪರಿಹಾರವನು ನೀ ಬಲ್ಲೆ II</verse>
				<verse number="4">ಅಕ್ಕಪಕ್ಕದಲಿ ಸಹಾಯಕರಾರೂ ಇಲ್ಲ I ಆಶ್ರಯರಹಿತ, ಹಿತಚಿಂತಕರಾರೂ ನನಗಿಲ್ಲ II</verse>
				<verse number="5">ಪ್ರಭುವೇ, ನನಗಾಶ್ರಯ ನೀನೇ I ನನ್ನ ಬಾಳಿನ ಸೊತ್ತು ನೀನೇ I ಕೂಗಿ ನಿನಗೆ ಮೊರೆಯಿಡುತ್ತೇನೆ II</verse>
				<verse number="6">ಕುಗ್ಗಿ ಹೋಗಿರುವೆ, ನನ್ನ ಕೂಗಿಗೆ ಪ್ರಭು ಕಿವಿಗೊಡು I ಬಲಿಷ್ಠ ಹಿಂಸಾತ್ಮಕರಿಂದ ನನ್ನನು ಪಾರುಮಾಡು II</verse>
				<verse number="7">ಬಿಡಿಸು ಸೆರೆಯಿಂದೆನ್ನನು, ಭಜಿಸುವೆನು ನಿನ್ನ ನಾಮವನು I ಸಜ್ಜನರ ಸಭೆಯಲಿ ಕೊಂಡಾಡುವೆನು ನಿನ್ನ ಉಪಕಾರವನು II</verse>
			</chapter>
			<chapter number="143">
				<verse number="1">ಆಲಿಸು ಪ್ರಭು ನನ್ನ ಪ್ರಾರ್ಥನೆ ಸೇರಲಿ ನಿನಗೀ ಬಿನ್ನಹ I ನಿನ್ನ ನೀತಿಸತ್ಯತೆಗಳನುಸಾರ ಪಾಲಿಸೆನಗೆ ಸದುತ್ತರ II</verse>
				<verse number="2">ಗುರಿಮಾಡಬೇಡ ನಿನ್ನ ದಾಸನನು ನ್ಯಾಯ ವಿಚಾರಣೆಗೆ I ಯಾವ ಜೀವಾತ್ಮನೂ ನಿರ್ದೋಷಿಯಲ್ಲ ನಿನ್ನ ಲೆಕ್ಕಕೆ II</verse>
				<verse number="3">ಮಾಡಿಹನು ನನ್ನ ಪ್ರಾಣ ನೆಲಕಚ್ಚುವಂತೆ ಬೆನ್ನಟ್ಟಿಹಾ ವೈರಿ I ದೂಡಿಹನು ಎಂದೊ ಸತ್ತ ಶವದಂತೆ ಕಾರ್ಗತ್ತಲೆಗಾ ದ್ರೋಹಿ II</verse>
				<verse number="4">ಸೊರಗಿಹೋಗಿದೆ ನನ್ನ ಚೈತನ್ಯ I ನಿಬ್ಬೆರಗಾಗಿದೆ ನನ್ನ ಹೃದಯ II</verse>
				<verse number="5">ನೆನಸಿಕೊಳ್ಳುತಿಹೆನು ಹಳೆಯ ಕಾಲವನು I ಧ್ಯಾನಿಸುತಿಹೆನು ನಿನ್ನ ಕಾರ್ಯಗಳನು I ಸ್ಮರಿಸುತಿಹೆನು ನಿನ್ನ ಕೈಕೆಲಸಗಳನು II</verse>
				<verse number="6">ಬೇಡುತಾ ನಿನ್ನ ಕಡೆಗೆ ಕೈಚಾಚಿದೆ I ನಿನಗಾಗಿ ನನ್ನಾತ್ಮ ತವಕಪಡುತ್ತಿದೆ II</verse>
				<verse number="7">ಸದುತ್ತರ ಪಾಲಿಸು ಪ್ರಭೂ, ಸೊರಗಿದೆ ಎನ್ನ ಚೇತನ I ನೀ ವಿಮುಖನಾದರೆ ನಾ ನರಕಹೊಕ್ಕವರಿಗೆ ಸಮಾನ II</verse>
				<verse number="8">ಬೆಳಿಗ್ಗೆ ಸ್ಮರಿಸಮಾಡು ನಿನ್ನಚಲ ಪ್ರೀತಿಯನು I ನಿನ್ನಲ್ಲಿಯೆ ಇಟ್ಟಿರುವೆನು ನನ್ನ ನಂಬಿಕೆಯನು I ತೋರಿಸು ನನಗೆ ನಾ ಹಿಡಿಯಬೇಕಾದ ಮಾರ್ಗವನು I ನಿನ್ನ ಕಡೆಗೆ ಎತ್ತಿರುವೆನು ನನ್ನ ಹೃನ್ಮನಗಳನು II</verse>
				<verse number="9">ಶತ್ರುಗಳಿಂದ ಪ್ರಭು ಮುಕ್ತಗೊಳಿಸೆನ್ನನು I ನಿನ್ನನೇ ಮೊರೆಹೊಕ್ಕು ನಾ ಬಂದಿರುವೆನು II</verse>
				<verse number="10">ನೀನೆನ್ನ ದೇವರು; ಕಲಿಸೆನಗೆ ನಡೆಯಲು ನಿನ್ನ ಚಿತ್ತದಂತೆ I ನಿನ್ನ ಶುಭಾತ್ಮ ನೆರವಾಗಲಿ ನಾ ಸಮಹಾದಿಯಲಿ ನಡೆವಂತೆ II</verse>
				<verse number="11">ಜೀವಿಸಮಾಡೆನ್ನನು ಪ್ರಭು, ನಿನ್ನ ನಾಮದ ನಿಮಿತ್ತ I ನಿನ್ನ ನೀತಿಗನುಸಾರ ಬಿಡಿಸೆನ್ನ ಪ್ರಾಣವನು ಆಪತ್ತಿನಿಂದ II</verse>
				<verse number="12">ನಿನ್ನಚಲ ಪ್ರೀತಿಯಿಂದ ಧ್ವಂಸಮಾಡು ಶತ್ರುಗಳನು I ನಶಿಸಿಹಾಕು ಪ್ರಾಣವೈರಿಗಳನು, ನಾ ನಿನ್ನ ದಾಸನು II</verse>
			</chapter>
			<chapter number="144">
				<verse number="1">ಸ್ತುತಿಸ್ತೋತ್ರ ಪ್ರಭುವಿಗೆ, ನನ್ನ ಆಶ್ರಯದುರ್ಗಕ್ಕೆ I ಕಲಿಸಿಹನು ಕದನ ಕೈಗೆ, ಕಾಳಗ ನನ್ನ ಬೆರಳಿಗೆ II</verse>
				<verse number="2">ಆತನೇ ನನಗೆ ಬಂಡೆ, ಕೋಟೆ, ದುರ್ಗ, ಉದ್ಧಾರಕ I ನನಗೆ ರಕ್ಷಾಕವಚ, ಆಶ್ರಯ, ಶತ್ರು ವಿಧ್ವಂಸಕ II</verse>
				<verse number="3">ಹೇ ಪ್ರಭೂ, ಮನುಜನು ಎಷ್ಟರವನು, ನೀನವನನು ಲಕ್ಷಿಸಲು I ನರಮಾನವನು ಏತರವನು, ನೀನವನನು ಪರಾಮರಿಸಲು II</verse>
				<verse number="4">ಮಾನವನು ಕೇವಲ ಉಸಿರಿಗೆ ಸಮಾನ I ಮರೆಯಾಗುವ ನೆರಳು ಅವನ ಜೀವನ II</verse>
				<verse number="5">ಆಕಾಶವನು ತಗ್ಗಿಸಿ ಬಾ ಪ್ರಭು ಇಳಿದು I ಬೆಟ್ಟಗಳನು ನೀ ಮುಟ್ಟಲು, ಹೊಗೆ ಹೊರಹೊಮ್ಮುವುದು II</verse>
				<verse number="6">ಸಿಡಿಲಿನಿಂದ ಚೆದರಿಸಿಬಿಡು ಶತ್ರುಗಳನು I ನಿನ್ನಂಬುಗಳಿಂದ ಭ್ರಾಂತಗೊಳಿಸವರನು II</verse>
				<verse number="7">ನನ್ನ ಸೆಳೆದುಕೊ ಮಹಾಜಲರಾಶಿಯಿಂದ I ನಿನ್ನ ಕೈಚಾಚಿ ಮೇಲಣಲೋಕದಿಂದ I ನನ್ನನು ಬಿಡಿಸು ಅನ್ಯಜನರ ಕೈಯಿಂದ II</verse>
				<verse number="8">ಅವರ ಬಾಯಿಂದ ಬರುವ ಮಾತು ಅಸತ್ಯ I ಅವರು ಕೈಯೆತ್ತಿ ಮಾಡುವ ಶಪಥ ಮಿಥ್ಯ II</verse>
				<verse number="9">ಹಾಡುವೆ ದೇವಾ, ನಿನಗೆ ನೂತನ ಕೀರ್ತನೆಯನು I ಪಾಡುವೆ ನುಡಿಸುತ್ತಾ ದಶತಂತಿಯ ವೀಣೆಯನು II</verse>
				<verse number="10">ನೀನೇ ಅರಸುಗಳಿಗೆ ಜಯಪ್ರದನು I ದಾಸ ದಾವೀದನನು ಬಿಡಿಸಿದವನು II</verse>
				<verse number="11">ಕ್ರೂರ ವೈರಿಗಳಿಂದೆನ್ನ ಬಿಡಿಸಯ್ಯಾ I ಅವರ ಬಾಯಿಂದ ಬರುವ ಮಾತು ಅಸತ್ಯ I ಅವರು ಕೈಯೆತ್ತಿ ಮಾಡುವ ಶಪಥ ಮಿಥ್ಯ II</verse>
				<verse number="12">ನಮ್ಮ ಗಂಡು ಮಕ್ಕಳಿರಲಿ I ಯೌವನಾವಸ್ಥೆಯಲಿ ಹುಲುಸಾಗಿ ಬೆಳೆದ ಗಿಡಗಳಂತೆ II ನಮ್ಮ ಹೆಣ್ಣುಮಕ್ಕಳಿರಲಿ I ಅರಮನೆಯಲ್ಲಿ ಕೆತ್ತಿದ ಸುಂದರ ಮೂಲೆಗಂಬಗಳಂತೆ II</verse>
				<verse number="13">ತುಂಬಿರಲಿ ಸಕಲ ವಿಧ ಧಾನ್ಯಗಳಿಂದ ನಮ್ಮ ಕಣಜಗಳು I ಈಯಲಿ ಸಾವಿರಾರು ಮರಿಗಳನು ನಮ್ಮ ಹೊಲದ ಕುರಿಗಳು II</verse>
				<verse number="14">ನಮ್ಮ ಹಸುಗಳು ನೂರಾರು ಕರುಗಳನ್ನೀಯಲಿ I ಮೈಯಿಳಿಯದೆ, ಲೋಪವಿಲ್ಲದೆಯೆ ಗರ್ಭಧರಿಸಲಿ I ನಮ್ಮ ಬೀದಿಗಳಲಿ ಗೋಳಾಟ ಕೇಳಿಬರದಿರಲಿ II</verse>
				<verse number="15">ಇಂತಹ ಸಮೃದ್ಧಿ ಪಡೆದಿರುವ ಜನರು ಭಾಗ್ಯವಂತರು I ಯಾರಿಗೆ ದೇವರು ಪ್ರಭುವಾಗಿಹನೋ ಅವರು ಧನ್ಯರು II</verse>
			</chapter>
			<chapter number="145">
				<verse number="1">ದೇವಾ, ನನ್ನೊಡೆಯಾ, ಮಾಡುವೆ ನಿನ್ನ ಗುಣಗಾನ I ಯುಗಯುಗಾಂತರಕ್ಕೂ ನಿನ್ನ ನಾಮಕ್ಕೆ ನಮನ II</verse>
				<verse number="2">ಹೊಗಳುವೆನು ನಾ ದಿನದಿನವೂ ನಿನ್ನನು I ಭಜಿಸುವೆನೆಂದೆಂದಿಗೂ ನಿನ್ನ ಹೆಸರನು II</verse>
				<verse number="3">ಪ್ರಭು ಮಹಾತ್ಮನು, ಸ್ತುತ್ಯರ್ಹನು I ಆತನ ಮಹಿಮೆ ಅಗಮ್ಯವಾದದು II</verse>
				<verse number="4">ತಲೆಮಾರು ತಲೆಮಾರಿಗೆ ನುತಿಸುವುದು ನಿನ್ನ ಕಾರ್ಯಗಳನು I ತಿಳಸುವುದು ಪ್ರಭು, ನೀ ಮಾಡಿದೆಲ್ಲಾ ಮಹತ್ಕಾರ್ಯಗಳನು II</verse>
				<verse number="5">ಧ್ಯಾನಿಸುವೆನು ನಿನ್ನ ಅದ್ಭುತಕಾರ್ಯಗಳನು I ನಿನ್ನ ಮಹೋನ್ನತ ಮಹಿಮಾಪ್ರಭಾವವನು II</verse>
				<verse number="6">ಜನರು ಸಾರುವರು ನಿನ್ನ ಅದ್ಭುತ ಶಕ್ತಿಯನು I ನಾ ಪ್ರಸಿದ್ಧಪಡಿಸುವೆನು ನಿನ್ನ ಮಹಿಮೆಯನು II</verse>
				<verse number="7">ಪ್ರಕಟಿಸುವರವರು ನಿನ್ನ ಮಹೋಪಕಾರವನು I ಹಾಡಿ ಹೊಗಳುವರು ನಿನ್ನ ನ್ಯಾಯನೀತಿಯನು II</verse>
				<verse number="8">ಪ್ರಭು ದಯಾನಿಧಿ, ಕೃಪಾಸಾಗರನು I ಸಹನಶೀಲನು, ಪ್ರೀತಿಪೂರ್ಣನು II</verse>
				<verse number="9">ಪ್ರಭುವಿನ ಕರುಣೆ ಎಲ್ಲರ ಮೇಲೆ I ಆತನ ಕೃಪೆಯು ಸೃಷ್ಟಿಯ ಮೇಲೆ II</verse>
				<verse number="10">ಪ್ರಭು, ನಿನ್ನನು ಸ್ತುತಿಪುದು ಸೃಷ್ಟಿಯೆಲ್ಲವು I ಕೊಂಡಾಡುವುದು ನಿನ್ನನು ಭಕ್ತ ಸಮೂಹವು II</verse>
				<verse number="11">ಪ್ರಸಿದ್ಧಪಡಿಸುವರು ನಿನ್ನ ರಾಜ್ಯದ ಮಹತ್ವವನು I ವರ್ಣಿಸುವರವರು ನಿನ್ನ ಶಕ್ತಿ ಸಾಮರ್ಥ್ಯವನು II</verse>
				<verse number="12">ಅರಿವರಿಂತು ಜನರು ನಿನ್ನ ಶೂರ ಕಾರ್ಯಗಳನು I ಗ್ರಹಿಸುವರು ನಿನ್ನ ರಾಜ್ಯದ ಮಹಿಮೆ ಪ್ರಭಾವವನು II</verse>
				<verse number="13">ಶಾಶ್ವತವಾದುದು ನಿನ್ನ ರಾಜ್ಯವು I ಇರುವುದೆಂದಿಗು ನಿನ್ನ ಆಳ್ವಿಕೆಯು II</verse>
				<verse number="14">ನುಡಿಯಲಿ ಪ್ರಭು ಸದಾ ಪ್ರಾಮಾಣಿಕನು I ನಡೆಯಲಿ ಆತನು ಸದಾ ಪ್ರೀತಿಮಯನು II</verse>
				<verse number="15">ಎತ್ತುವನಾತ ಬಿದ್ದವರನೆಲ್ಲ I ಉದ್ಧರಿಪನು ಕುಗ್ಗಿದವರನೆಲ್ಲ II</verse>
				<verse number="16">ಎಲ್ಲ ಜೀವಿಗಳ ಕಣ್ಣು ಪ್ರಭು, ನಾಟಿವೆ ನಿನ್ನ ಕಡೆಗೆ I ಕಾಲಕಾಲಕೆ ಕೊಡುವೆ ಆಹಾರವನು ಅವುಗಳಿಗೆ II</verse>
				<verse number="17">ಎಲ್ಲ ಜೀವಿಗಳಿಗೆ ನೀ ಕೈ ನೀಡುವವನು I ಎಲ್ಲರ ಕೋರಿಕೆಗಳನು ಈಡೇರಿಸುವವನು II</verse>
				<verse number="18">ಪ್ರಭುವಿನ ಮಾರ್ಗ ಧರ್ಮಸಮ್ಮತ I ಆತನ ಕಾರ್ಯವೆಲ್ಲ ಪುನೀತ II</verse>
				<verse number="19">ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ I ಯಥಾರ್ಥವಾಗಿ ಆತನನು ಅರಸುವವರಿಗೆ II</verse>
				<verse number="20">ಹೆದರಿ ನಡೆಯುವವರ ಇಷ್ಟವನು ಈಡೇರಿಸುವನು I ಅವರ ಮೊರೆಯನು ಕೇಳಿ ಅವರನು ರಕ್ಷಿಸುವನು II</verse>
				<verse number="21">ಸಲಹುವನು ತನ್ನನು ಪ್ರೀತಿಸುವವರೆಲ್ಲರನು I ನಾಶಮಾಡುವನು ದುರ್ಮಾರ್ಗಿಗಳೆಲ್ಲರನು II</verse>
				<verse number="22">ಉಸುರುತಿದೆ ನನ್ನ ನಾಲಿಗೆ ಪ್ರಭುವಿನ ಸ್ತೋತ್ರವನು I ನರರೆಲ್ಲರು ಸ್ತುತಿಸಲಿ ಸತತ ಆತನ ಶ್ರೀನಾಮವನು II</verse>
			</chapter>
			<chapter number="146">
				<verse number="1">ಪ್ರಭುವಿಗೆ ಸ್ತುತಿಸ್ತೋತ್ರ ಅಲ್ಲೆಲೂಯ I ಮನವೇ, ವಂದಿಸು ಆತನನು ಅಲ್ಲೆಲೂಯ II</verse>
				<verse number="2">ಪ್ರಾಣವಿರುವವರೆಗೆ ಸ್ತುತಿಸುವೆನು ಪ್ರಭುವನು I ಬಾಳೆಲ್ಲ ಹಾಡಿ ಭಜಿಪೆನು ನನ್ನ ದೇವರನು II</verse>
				<verse number="3">ನಂಬಬೇಡ ಅಧಿಕಾರಿಯನು I ನೆಚ್ಚಬೇಡ ನರಮಾನವನನು I ಉದ್ಧರಿಸಲು ಅಸಮರ್ಥನವನು II</verse>
				<verse number="4">ಉಸಿರುಹೋದುದೇ ಮರಳುತ್ತಾನವನು ಮಣ್ಣಿಗೆ I ಅಂದೇ ಅಳಿಯುತ್ತದೆ ಅವನೆಲ್ಲಾ ಯೋಜನೆ II</verse>
				<verse number="5">ಇಸ್ರಯೇಲ ಕುಲದೇವರು ಯಾರಿಗೆ ಉದ್ಧಾರಕನೋ, ಅವನೇ ಧನ್ಯನು I ಪ್ರಭುವನು ತನ್ನ ದೇವರೆಂದು ಯಾರು ನಂಬಿಹನೋ, ಅವನೇ ಧನ್ಯನು II</verse>
				<verse number="6">ಭೂಮ್ಯಾಕಾಶ, ಸಾಗರ, ಚರಾಚರಗಳನು ನಿರ್ಮಿಸಿದವ ಆತನೆ I ಕೊಟ್ಟ ವಾಗ್ದಾನಗಳನು ತಪ್ಪದೆ ನೆರವೇರಿಸುವವ ಆತನೆ II</verse>
				<verse number="7">ದೊರಕಿಸುವನು ನ್ಯಾಯ ದಲಿತರಿಗೆ I ಒದಗಿಸುವನು ಆಹಾರ ಹಸಿದವರಿಗೆ I ನೀಡುವನು ಬಿಡುಗಡೆ ಬಂಧಿತರಿಗೆ II</verse>
				<verse number="8">ಕಣ್ಣನ್ನೀಯುವನು ಪ್ರಭು ಕುರುಡರಿಗೆ I ಉದ್ಧಾರಕನಾ ಪ್ರಭು ಕುಗ್ಗಿದವರಿಗೆ I ಆತನ ಒಲವಿರುವುದು ಸಾಧು ಸಜ್ಜನರಿಗೆ II</verse>
				<verse number="9">ರಕ್ಷಿಸುವನು ಪ್ರಭು ಪರದೇಶಿಗಳನು I ಆದರಿಸುವನು ಅನಾಥರನು, ವಿಧವೆಯರನು I ನಿರ್ಮೂಲ ಮಾಡುವನು ದುರ್ಜನರ ಮಾರ್ಗವನು II</verse>
				<verse number="10">ಪ್ರಭುವೇ ಅರಸನು ಸದಾಕಾಲಕು I ಸಿಯೋನ್, ನಿನ್ನ ದೇವನಾಳ್ವನು ತಲತಲಾಂತರಕು I ಅಲ್ಲೆಲೂಯ! II</verse>
			</chapter>
			<chapter number="147">
				<verse number="1">	ನಮ್ಮ ದೇವರನು ಹೊಗಳಿ ಹಾಡುವುದು ಉಚಿತ I ಆತನ ಸ್ತುತಿ ಮನೋಹರ, ಅದು ಬಲುಸೂಕ್ತ II</verse>
				<verse number="2">ನಿರ್ಮಿಸುತಿಹನು ಪ್ರಭು ಮರಳಿ ಜೆರುಸಲೇಮನು I ಬಂದು ಸೇರಿಸುತಿಹನು ಚದರಿದ ಇಸ್ರಯೇಲರನು II</verse>
				<verse number="3">ವಾಸಿಮಾಡುವನು ಮುರಿದ ಮನಸ್ಸುಳ್ಳವರನು I ಕಟ್ಟಿ ಗುಣಪಡಿಸುವನು ಅವರ ಗಾಯಗಳನು II</verse>
				<verse number="4">ನಿಯಮಿಸಿಹನು ತಾರೆಗಳ ಸಂಖ್ಯೆಯನು I ಇಟ್ಟಿಹನು ಪ್ರತಿಯೊಂದಕೂ ಹೆಸರನು II</verse>
				<verse number="5">ನಮ್ಮ ಪ್ರಭು ಘನವಂತ, ಪರಾಕ್ರಮಿ I ಅಪರಿಮಿತವಾದುದು ಆತನ ಜ್ಞಾನನಿಧಿ II</verse>
				<verse number="6">ಆಧಾರವಾಗಿಹನು ಪ್ರಭು ದೀನರಿಗೆ I ತುಳಿದುಬಿಡುವನು ದುರ್ಜನರನು ನೆಲಕೆ II</verse>
				<verse number="7">ಧನ್ಯವಾದವಿತ್ತು ಹಾಡಿರಿ ಪ್ರಭುವನು I ಕಿನ್ನರಿಯೊಡನೆ ಭಜಿಸಿರಿ ನಮ್ಮ ದೇವನನು II</verse>
				<verse number="8">ಕವಿಸುವನಾತ ಮೋಡಗಳನು ಗಗನದಲಿ I ಸುರಿಸುವನು ಮಳೆಯನು ಬುವಿಯಲಿ I ಬೆಳೆಸುವನು ಹುಲ್ಲನು ಬೆಟ್ಟಗಳಲಿ II</verse>
				<verse number="9">ಪಶುಗಳಿಗೂ ಕೂಗುವ ಕಾಗೆಮರಿಗಳಿಗೂ I ಒದಗಿಸುವನು ಬೇಕಾದ ಆಹಾರಗಳನು II</verse>
				<verse number="10">ಅಶ್ವಬಲದಲಿ ಆತನಿಗೆ ಇಷ್ಟವಿಲ್ಲ I ಶೂರನ ಶಕ್ತಿಯನವನು ಮೆಚ್ಚುವುದಿಲ್ಲ II</verse>
				<verse number="11">ಮೆಚ್ಚುವನಾತ ತನ್ನಲಿ ಭಯಭಕ್ತಿಯುಳ್ಳವರನು I ತನ್ನಚಲ ಪ್ರೀತಿಯಲಿ ಭರವಸೆಯುಳ್ಳವರನು II</verse>
				<verse number="12">ಜೆರುಸಲೇಮೇ, ಕೀರ್ತಿಸು ಪ್ರಭುವನು I ಸಿಯೋನೇ, ಸ್ತುತಿಸು ನಿನ್ನ ದೇವರನು II</verse>
				<verse number="13">ಬಲಪಡಿಸಿಹನಾತ ನಿನ್ನ ಹೆಬ್ಬಾಗಿಲ ಅಗುಳಿಗಳನು I ಆಶೀರ್ವದಿಸಿಹನು ನಿನ್ನಲ್ಲಿರುವ ಮಕ್ಕಳನು II</verse>
				<verse number="14">ನಿನ್ನ ಪ್ರಾಂತದೊಳಗೆಲ್ಲಾ ಇರುವುದು ನೆಮ್ಮದಿ I ನೀಡುವನು ನಿನಗೆ ಅತ್ಯುತ್ತಮ ಗೋದಿ II</verse>
				<verse number="15">ಕಳಿಸುವನು ಧರೆಗೆ ತನ್ನ ಆಣತಿ I ಸಿದ್ಧಿಯಾಗುವುದದು ಬಲು ಶೀಘ್ರದಿ II</verse>
				<verse number="16">ಸುರಿಸುವನು ಹಿಮವನು ಉಣ್ಣೆಯಂತೆ I ಹರಡುವನು ಇಬ್ಬನಿಯನು ಬೂದಿಯಂತೆ II</verse>
				<verse number="17">ಸುರಿಸುವನು ಆಲಿಕಲ್ಲನು ರೊಟ್ಟಿ ತುಂಡುಗಳಂತೆ I ಕೊರೆಯುವ ಚಳಿಯನು ಕಳಿಸುವನು ಸಹಿಸಲಾಗದಂತೆ II</verse>
				<verse number="18">ಕರಗುವುವು ಆ ಕಲ್ಲುಗಳು ಆತನ ಅಪ್ಪಣೆಗೆ I ಹರಿಯುವುದು ನೀರು ಆತ ಕಳುಹಿಸುವ ಗಾಳಿಗೆ II</verse>
				<verse number="19">ತಿಳಿಸಿಹನು ತನ್ನ ವಾಕ್ಯವನು ಯಕೋಬ್ಯರಿಗೆ I ತನ್ನ ವಿಧಿನಿಯಮಗಳನು ಇಸ್ರಯೇಲರಿಗೆ II</verse>
				<verse number="20">ಬೇರಾವ ಜನಾಂಗಕ್ಕೂ ಆತ ಹೀಗೆ ಮಾಡಿಲ್ಲ I ಆತನ ವಿಧಿನಿಯಮಗಳನು ಅವರಿಗೆ ತಿಳಿಸಿಲ್ಲ I ಅಲ್ಲೆಲೂಯ! II</verse>
			</chapter>
			<chapter number="148">
				<verse number="1">	ಹೊಗಳಿರಿ ಸ್ವರ್ಗದಿಂದ ಪ್ರಭುವನು I ವಂದಿಸಿ ಮಹೋನ್ನತದಲಿ ಆತನನು II</verse>
				<verse number="2">ಆತನ ಸಮಸ್ತ ದೂತರೇ, ಸ್ತುತಿಸಿ ಆತನನು I ಆತನ ಎಲ್ಲಾ ಗಣಗಳೇ, ಹೊಗಳಿ ಆತನನು II</verse>
				<verse number="3">ಸೂರ್ಯಚಂದ್ರರೇ, ಹೊಗಳಿ ಆತನನು I ಮಿನುಗುವ ತಾರೆಗಳೇ, ಹೊಗಳಿ ಆತನನು II</verse>
				<verse number="4">ಉನ್ನತೋನ್ನತ ಆಕಾಶವೇ, ಹೊಗಳು ಆತನನು I ಅದರ ಮೇಲಿನ ಜಲರಾಶಿಗಳೇ, ಹೊಗಳಿ ಆತನನು II</verse>
				<verse number="5">ಹೊಗಳಲಿ ಪ್ರಭುವಿನ ನಾಮವನು ಇವೆಲ್ಲ I ಆತನ ಅಪ್ಪಣೆಗೆ ಉಂಟಾದವುಗಳೆಲ್ಲ II</verse>
				<verse number="6">ಸ್ಥಾಪಿಸಿದನು ಎಂದೆಂದಿಗೂ ಅವನ್ನು I ವಿಧಿಸಿಹನು ಮೀರಲಾಗದ ನಿಯಮವನು I</verse>
				<verse number="7">ತಿಮಿಂಗಲಗಳೂ ಆದಿಸಾಗರಗಳೂ I ಹೊಗಳಲಿ ಭೂಮಂಡಲದಿಂದ ಪ್ರಭುವನು II</verse>
				<verse number="8">ಕಿಚ್ಚು, ಕಲ್ಮಳೆ, ಹಿಮ, ಹಬೆ ಇವುಗಳೆಲ್ಲವೂ I ಆತ ಹೇಳಿದಂತೆ ಕೇಳುವ ಬಿರುಗಾಳಿಯೂ, II</verse>
				<verse number="9">ಎಲ್ಲಾ ಬೆಟ್ಟಗಳೂ ಗುಡ್ಡಗಳೂ I ಫಲವೃಕ್ಷಗಳೂ ದೇವದಾರುಗಳೂ II</verse>
				<verse number="10">ಕಾಡುಮೃಗಗಳು, ಸಾಕುಪ್ರಾಣಿಗಳು I ಕ್ರಿಮಿಕೀಟಗಳು, ಪ್ರಾಣಿಪಕ್ಷಿಗಳು II</verse>
				<verse number="11">ಭೂರಾಜರು, ಎಲ್ಲ ಜನಾಂಗಗಳು I ಅಧಿಕಾರಿಗಳು, ದೇಶಾಧಿಪತಿಗಳು II</verse>
				<verse number="12">ಯುವಕರೂ ಯುವತಿಯರೂ I ಮುದುಕರೂ ಮಕ್ಕಳೂ II</verse>
				<verse number="13">ಹೊಗಳಲಿ ಇವರೆಲ್ಲರು ಪ್ರಭುವಿನ ನಾಮವನು I ಭೂಮ್ಯಾಕಾಶ ಮೀರಿದ ಆತನ ಮಹಿಮೆಯನು I ಆತನ ಮಹತ್ತಾದ ಏಕೈಕ ನಾಮವನು II</verse>
				<verse number="14">ಕೋಡು ಮೂಡಿಸಿಹನು ಪ್ರಭು ತನ್ನ ಪ್ರಜೆಗೆ I ಖ್ಯಾತಿ ತಂದಿಹನು ತನ್ನ ಭಕ್ತಾದಿಗಳಿಗೆ I ತನ್ನ ಆಪ್ತಜನರಾದ ಇಸ್ರಯೇಲರಿಗೆ I ಅಲ್ಲೆಲೂಯ! II</verse>
			</chapter>
			<chapter number="149">
				<verse number="1">	ಅಲ್ಲೆಲೂಯ! ಹಾಡಿರಿ ಪ್ರಭುವಿಗೆ ನೂತನ ಕೀರ್ತನೆಯನು I ಭಕ್ತರ ಸಭೆಯಲಿ ಸ್ತುತಿಮಾಡಿರಿ ಆತನನು II</verse>
				<verse number="2">ಆನಂದಿಸಲಿ ತಮ್ಮ ಸೃಷ್ಟಿಕರ್ತನಲಿ ಇಸ್ರಯೇಲರು I ತಮ್ಮಾ ರಾಜನಿಗೆ ಜಯಕಾರ ಮಾಡಲಿ ಸಿಯೋನಿನವರು II</verse>
				<verse number="3">ಆತನ ನಾಮವನು ಕೀರ್ತಿಸಲಿ ಕುಣಿತದಿಂದ I ಆತನನು ಭಜಿಸಲಿ ತಮಟೆ, ಕಿನ್ನರಿಗಳಿಂದ II</verse>
				<verse number="4">ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು I ಜಯಶೀಲರನ್ನಾಗಿಸುತ್ತಾನೆ ದೀನದಲಿತರನು II</verse>
				<verse number="5">ಹಿಗ್ಗಲಿ ಭಕ್ತಾದಿಗಳು ದೊರೆತ ವಿಜಯದಲಿ I ಜಯಕಾರ ಮಾಡಲಿ ತಮ್ಮ ತಮ್ಮ ಶಿಬಿರಗಳಲಿ II</verse>
				<verse number="6">ಇರಲಿ ಪ್ರಭುವಿನ ಸ್ತೋತ್ರ ಅವರ ಬಾಯಲಿ I ಇರಲಿ ಇಬ್ಬಾಯಿ ಕತ್ತಿಯು ಅವರ ಕೈಯಲಿ II</verse>
				<verse number="7">ಈ ಪರಿ ಮುಯ್ಯಿತೀರಿಸಲಿ ಜನಾಂಗಗಳಿಗೆ I ವಿಧಿಸಲಿ ದಂಡನೆಯನು ಅನ್ಯರಾಷ್ಟ್ರಗಳಿಗೆ II</verse>
				<verse number="8">ಬಂದಿಸಲಿ ಅವರ ರಾಜರನು ಸಂಕೋಲೆಯಿಂದ I ಅವರ ಅಧಿಕಾರಿಗಳನು ಕಬ್ಬಿಣದ ಬೇಡಿಗಳಿಂದ II</verse>
				<verse number="9">ವಿಧಿಸಲಿ ಅವರಿಗೆ ಲಿಖಿತಾಜ್ಞೆಯ ಶಿಕ್ಷೆಯನು I ಇದು ತರಲಿ ಭಕ್ತರೆಲ್ಲರಿಗೆ ಗೌರವವನು I ಅಲ್ಲೆಲೂಯ! II</verse>
			</chapter>
			<chapter number="150">
				<verse number="1">	ಅಲ್ಲೆಲೂಯ! I ಸ್ತುತಿಸಿರಿ ದೇವರನು ಆತನ ಪರಿಶುದ್ಧ ಆಲಯದಲಿ I ಆತನ ಶಕ್ತಿಯನು ಸಾರುವಾ ಆಕಾಶಮಂಡಲದಲಿ II</verse>
				<verse number="2">ಸ್ತುತಿಸಿರಿ ಆತನ ಮಹತ್ಕಾರ್ಯಗಳಿಗಾಗಿ I ಆತನ ಮಹಾಪ್ರಭಾವಕ್ಕೆ ಅನುಗುಣವಾಗಿ II</verse>
				<verse number="3">ಆತನನ್ನು ಸ್ತುತಿಸಿರಿ ಕೊಂಬುಗಳನ್ನೂದುತಾ I ಸ್ವರಮಂಡಲಗಳನು, ಕಿನ್ನರಿಗಳನು ಬಾರಿಸುತಾ II</verse>
				<verse number="4">ಆತನನ್ನು ಸ್ತುತಿಸಿರಿ ತಮಟೆ ಬಡಿಯುತಾ ಕುಣಿಯುತಾ I ಆತನನ್ನು ಸ್ತುತಿಸಿರಿ ತಂತಿವಾದ್ಯ ನುಡಿಸುತಾ ಕೊಳಲೂದುತಾ II</verse>
				<verse number="5">ಆತನನ್ನು ಸ್ತುತಿಸಿರಿ ತಾಳದಿಂದ I ಆತನನ್ನು ಸ್ತುತಿಸಿರಿ ಝಲ್ಲರಿಯಿಂದ II</verse>
				<verse number="6">ಪ್ರಭುವನು ಸ್ತುತಿಸಲಿ ಉಸಿರಿರುವುದೆಲ್ಲವೂ I ಪ್ರಭುವಿಗೆ ಸ್ತೋತ್ರವಾಗಲಿ ಅಲ್ಲೆಲೂಯ! II</verse>
			</chapter>
		</book>
		<book number="20">
			<chapter number="1">
				<verse number="1">ಇಸ್ರಯೇಲರಿಗೆ ಅರಸನಾಗಿದ್ದ ದಾವೀದನ ಮಗ ಸೊಲೊಮೋನನ ಜ್ಞಾನೋಕ್ತಿಗಳು:</verse>
				<verse number="2">ಜ್ಞಾನವನ್ನೂ ಶಿಸ್ತನ್ನೂ ಪಡೆಯುವುದಕ್ಕೆ ಒಳನೋಟದ ಮಾತುಗಳನ್ನು ಗ್ರಹಿಸುವುದಕ್ಕೆ,</verse>
				<verse number="3">ವಿವೇಕ ಹಾಗೂ ನ್ಯಾಯನೀತಿಯ ಮಾರ್ಗದಲ್ಲಿ ಶಿಕ್ಷಿತರಾಗುವುದಕ್ಕೆ ಮತ್ತು</verse>
				<verse number="4">ಮೂಢರಿಗೆ ಬುದ್ಧಿಯನ್ನೂ ಯುವಜನರಿಗೆ ತಿಳುವಳಿಕೆಯನ್ನೂ ಕಲಿಸುವುದಕ್ಕೆ ಒದಗುತ್ತವೆ ಈ ಜ್ಞಾನೋಕ್ತಿಗಳು.</verse>
				<verse number="5">ಇವುಗಳನ್ನು ಕೇಳಿ ಜಾಣನು ಇನ್ನೂ ಜಾಣ ನಾಗುವನು, ವಿವೇಕಿಯು ಮತ್ತಷ್ಟು ಜ್ಞಾನಸಂಪನ್ನನಾಗುವನು.</verse>
				<verse number="6">ಗಾದೆಗಳನ್ನೂ ಗೂಢಾರ್ಥಗಳನ್ನೂ ಜ್ಞಾನಿಯ ನುಡಿ ಹಾಗು ಒಗಟುಗಳನ್ನೂ ತಿಳಿದುಕೊಳ್ಳಲು ಸಹ ಇವು ಸಾಧನಗಳು.</verse>
				<verse number="7">ಸರ್ವೇಶ್ವರನಲ್ಲಿ ಭಯಭಕ್ತಿಯೇ ಜ್ಞಾನಕ್ಕೆ ಮೂಲ; ಮೂರ್ಖರಿಗಾದರೋ ಜ್ಞಾನ, ಶಿಸ್ತು ಎಂದರೆ ತಾತ್ಸಾರ.</verse>
				<verse number="8">ಮಗನೇ, ನಿನ್ನ ತಂದೆಯ ಬೋಧೆಗೆ ಕಿವಿಗೊಡು, ನಿನ್ನ ತಾಯಿಯ ಉಪದೇಶವನ್ನು ತೊರೆಯದಿರು.</verse>
				<verse number="9">ಅವು ನಿನ್ನ ತಲೆಗೆ ಸುಂದರ ಕಿರೀಟ, ನಿನ್ನ ಕೊರಳಿಗೆ ಕಂಠಾಭರಣ.</verse>
				<verse number="10">ಮಗನೇ, ಪಾಪಿಗಳ ಪ್ರೇರಣೆಗೆ ಒಪ್ಪಿಗೆ ಕೊಡಲೇಬೇಡ.</verse>
				<verse number="11">ಅವರು ನಿನಗೆ “ನಮ್ಮೊಡನೆ ಬಾ, ಹೊಂಚುಹಾಕಿ ಹತ್ಯೆಮಾಡೋಣ;</verse>
				<verse number="12">ಪಾತಾಳಕ್ಕಿಳಿಯುವವರನ್ನು ನರಕ ನುಂಗುವಂತೆ ಅವರನ್ನು ಜೀವಸಹಿತ ಪೂರ್ತಿಯಾಗಿ ಕಬಳಿಸಿಬಿಡೋಣ ಬಾ;</verse>
				<verse number="13">ಅಮೂಲ್ಯವಾದ ಸೊತ್ತನ್ನೆಲ್ಲಾ ಕಂಡುಹಿಡಿಯೋಣ; ಕೊಳ್ಳೆಹೊಡೆದು ಮನೆ ತುಂಬಿಸಿಕೊಳ್ಳೋಣ, ಬಾ;</verse>
				<verse number="14">ನಮ್ಮೊಡನೆ ಪಾಲುಗಾರನಾಗಲು ಬಾ; ನಮ್ಮೆಲ್ಲರ ನಿಧಿ ಒಂದೇ ಆಗಿರಲಿ” ಎಂದೆಲ್ಲಾ ಹೇಳುವರು.</verse>
				<verse number="15">ಆದರೆ ಮಗನೇ, ಅವರೊಡನೆ ಸೇರಬೇಡ; ನೀನು ಅವರ ಮಾರ್ಗದಲ್ಲಿ ಹೆಜ್ಜೆಯಿಡಬೇಡ.</verse>
				<verse number="16">ಅವರ ಕಾಲು ಕೇಡನ್ನು ಹಿಂಬಾಲಿಸಿ ಓಡುತ್ತವೆ ರಕ್ತಪಾತಕ್ಕಾಗಿ ಅವರು ತುಡಿಯುತ್ತಿರುತ್ತಾರೆ.</verse>
				<verse number="17">ರೆಕ್ಕೆಯುಳ್ಳ ಹಕ್ಕಿಯ ಕಣ್ಣೆದುರಿಗೇ ಬಲೆಯನ್ನು ಹರಡುವುದು ವ್ಯರ್ಥವಲ್ಲವೆ?</verse>
				<verse number="18">ಇಂಥವರು ಹೊಂಚುಹಾಕುವುದು ಸ್ವಹತ್ಯಕ್ಕೇ, ಬಲೆ ಒಡ್ಡುವುದು ಸ್ವಂತ ಪ್ರಾಣನಾಶಕ್ಕೆ.</verse>
				<verse number="19">ಸೂರೆ ಮಾಡುವವರೆಲ್ಲರ ಪಾಡು ಇದುವೆ; ಕೊಳ್ಳೆಯು, ಕೊಳ್ಳೆಗಾರರ ಪ್ರಾಣವನ್ನೇ ಕೊಳ್ಳೆಮಾಡುತ್ತದೆ.</verse>
				<verse number="20">ಜ್ಞಾನವೆಂಬಾಕೆ ಹಾದಿಗಳಲ್ಲಿ ಕೂಗುತ್ತಾ ಇದ್ದಾಳೆ; ಬೀದಿಚೌಕಗಳಲ್ಲಿ ದನಿಗೈಯುತ್ತಾ ಇದ್ದಾಳೆ;</verse>
				<verse number="21">ಪೇಟೆಯ ಜನಜಂಗುಳಿಯ ನಡುವೆ, ಪುರ ದ್ವಾರಗಳಲ್ಲೆ, ಹೀಗೆಂದು ಪ್ರಚಾರ ಮಾಡುತ್ತಿದ್ದಾಳೆ:</verse>
				<verse number="22">“ಮೂಢರೇ, ಎಂದಿನ ತನಕ ಮೂಢರಾಗಿರಲಾಶಿಸುವಿರಿ? ಕುಚೋದ್ಯಗಾರರೇ, ಎಷ್ಟುಕಾಲ ಕುಚೋದ್ಯಗಾರರಾಗಿರಲಿಚ್ಚಿಸುವಿರಿ? ಮೂರ್ಖರೇ, ಎಷ್ಟರವರೆಗೆ ತಿಳುವಳಿಕೆಯನ್ನು ಹಗೆಮಾಡುವಿರಿ?</verse>
				<verse number="23">ನನ್ನ ಎಚ್ಚರಿಕೆಯ ಮಾತಿನತ್ತ ಗಮನಕೊಡಿ; ನನ್ನ ಚೈತನ್ಯವನ್ನು ನಿಮ್ಮ ಮೇಲೆ ಸುರಿಸಿ, ನನ್ನ ನುಡಿಯನ್ನು ನಿಮಗೆ ತಿಳಿಯಪಡಿಸುವೆನು.</verse>
				<verse number="24">ನಾನು ನಿಮ್ಮನ್ನು ಕರೆದಾಗ ತಿರಸ್ಕರಿಸಿದಿರಿ. ನಾನು ನಿಮಗೆ ಕೈ ನೀಡಿದಾಗ ಗಮನಿಸದೆ ಹೋದಿರಿ.</verse>
				<verse number="25">ನನ್ನ ಬುದ್ಧಿವಾದವನ್ನು ಅಲಕ್ಷ್ಯಮಾಡಿದಿರಿ, ನನ್ನ ತಿದ್ದುಪಾಟನ್ನು ತಳ್ಳಿಬಿಟ್ಟಿರಿ.</verse>
				<verse number="26">ಆದುದರಿಂದ ಬಿರುಗಾಳಿಯಂತೆ ನಿಮಗೆ ಅಪಾಯಬಂದಾಗ, ತುಫಾನಿನಂತೆ ನಿಮಗೆ ಆಪತ್ತು ಬಂದೊದಗಿದಾಗ,</verse>
				<verse number="27">ಕಷ್ಟಸಂಕಟಗಳು ನಿಮಗೆ ಸಂಭವಿಸಿದಾಗ ನಿಮ್ಮನ್ನು ಕುರಿತು ನಾನೆ ನಕ್ಕು ಪರಿಹಾಸ್ಯ ಮಾಡುವೆನು.</verse>
				<verse number="28">ಆಗ ನನಗೆ ಮೊರೆಯಿಟ್ಟರೂ ಉತ್ತರಿಸೆನು; ಆತುರದಿಂದ ಹುಡುಕಿದರೂ ನಾನು ಕಾಣಸಿಗೆನು.</verse>
				<verse number="29">ಏಕೆಂದರೆ ಸುಜ್ಞಾನವನ್ನೇ ಅವರು ದ್ವೇಷಿಸಿದರು, ಸರ್ವೇಶ್ವರನಲ್ಲಿ ಭಯಭಕ್ತಿಯಿರಿಸದೆ ಹೋದರು.</verse>
				<verse number="30">ನನ್ನ ಆಲೋಚನೆಯನ್ನು ಅವರು ಕೇಳಲಿಲ್ಲ, ನನ್ನ ಪ್ರತಿಯೊಂದು ಎಚ್ಚರಿಕೆಯ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ.</verse>
				<verse number="31">ಈ ಕಾರಣ, ತಮ್ಮ ನಡತೆಗೆ ತಕ್ಕ ಫಲವನ್ನು ಅನುಭವಿಸುವರು, ತಮ್ಮ ಕುಯುಕ್ತಿಗಳ ಪರಿಣಾಮದಿಂದ ಹೊಟ್ಟೆ ತುಂಬಿಸಿಕೊಳ್ಳುವರು.</verse>
				<verse number="32">ಮೂಢರು ತಮ್ಮ ಉದಾಸೀನತೆಯಿಂದಲೆ ಹತರಾಗುವರು. ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೆ ನಾಶವಾಗುವರು.</verse>
				<verse number="33">ನನ್ನ ಮಾತಿಗೆ ಕಿವಿಗೊಡುವವರಾದರೋ ಸುರಕ್ಷಿತವಾಗಿರುವರು, ಕೇಡಿಗೆ ಭಯಪಡದೆ ನೆಮ್ಮದಿಯಾಗಿ ಬಾಳುವರು.</verse>
			</chapter>
			<chapter number="2">
				<verse number="1">ಮಗನೇ, ನನ್ನ ಮಾತುಗಳನ್ನು ಅಂಗೀಕರಿಸು; ನಿಧಿಯಂತೆ ನನ್ನ ವಿಧಿಗಳನ್ನು ಕಾದಿರಿಸು.</verse>
				<verse number="2">ಜ್ಞಾನದ ಕಡೆಗೆ ಕಿವಿಗೊಡು, ವಿವೇಕದ ಕಡೆಗೆ ಮನತಿರುಗಿಸು.</verse>
				<verse number="3">ಬುದ್ಧಿಗಾಗಿ ಮೊರೆಯಿಡು, ವಿವೇಕಕ್ಕಾಗಿ ಕೂಗಿಕೊಳ್ಳು.</verse>
				<verse number="4">ಹಣದಂತೆ ಅದನ್ನು ಹುಡುಕು, ನಿಧಿಯಂತೆ ಅದನ್ನು ತಡಕು.</verse>
				<verse number="5">ಆಗ ಅರಿತುಕೊಳ್ಳುವೆ ದೈವಭಯವನ್ನು, ಪಡೆದುಕೊಳ್ಳುವೆ ದೈವಜ್ಞಾನವನ್ನು.</verse>
				<verse number="6">ಜ್ಞಾನವನ್ನು ನೀಡುವಾತ ಸರ್ವೇಶ್ವರನೇ; ತಿಳುವಳಿಕೆ, ವಿವೇಕ ಹೊರಡುವುದು ಆತನ ಬಾಯಿಂದಲೇ.</verse>
				<verse number="7">ಜ್ಞಾನವನ್ನು ಸಜ್ಜನರಿಗೆ ಸೇರಿಸಿಡುವನಾತ, ಸನ್ಮಾರ್ಗಿಗಳಿಗೆ ಕವಚವಾಗಿರುವನಾತ.</verse>
				<verse number="8">ನ್ಯಾಯಮಾರ್ಗವನ್ನು ಕಾಯುವನಾತ, ಭಕ್ತರ ಹಾದಿಯನ್ನು ಭದ್ರವಾಗಿಸುವನಾತ.</verse>
				<verse number="9">ಆಗ ನೀತಿನ್ಯಾಯಗಳನ್ನು ನೀನರಿತುಕೊಳ್ಳುವೆ, ಸಕಲ ಸನ್ಮಾರ್ಗಸತ್ಯತೆಗಳನ್ನೂ ತಿಳಿದುಕೊಳ್ಳುವೆ.</verse>
				<verse number="10">ಜ್ಞಾನ ಉದಯಿಸುವುದು ನಿನ್ನ ಹೃದಯದೊಳಗೆ, ತಿಳುವಳಿಕೆ ಬೆಳಗುವುದು ನಿನ್ನ ಆತ್ಮದೊಳಗೆ.</verse>
				<verse number="11">ಬುದ್ಧಿಯು ನಿನಗೆ ಕಾವಲಾಗಿರುವುದು, ವಿವೇಕವು ನಿನ್ನನ್ನು ಕಾಪಾಡುವುದು.</verse>
				<verse number="12">ಹೀಗೆ ದುರ್ಮಾರ್ಗದಿಂದ ತಪ್ಪಿಸಿಕೊಳ್ಳುವೆ, ಮೂರ್ಖ ಮಾತುಗಾರನಿಂದ ಮರೆಯಾಗುವೆ.</verse>
				<verse number="13">ಅಂಥವರು ಹಿಡಿವುದು ಕತ್ತಲು ಹಾದಿಯನ್ನು, ತೊರೆದುಬಿಡುವರು ಸತ್ಯದ ಮಾರ್ಗವನ್ನು.</verse>
				<verse number="14">ಅವರು ಸಂತೋಷಿಸುವುದು ಕೇಡನ್ನು ಮಾಡುವುದರಲ್ಲಿ. ಉಲ್ಲಾಸಿಸುವುದು ಕೆಟ್ಟವರ ದುಷ್ಟತನದಲ್ಲಿ,</verse>
				<verse number="15">ಅವರ ಮಾರ್ಗ ಅಂಕು, ಅವರ ನಡತೆ ಡೊಂಕು.</verse>
				<verse number="16">ವಿವೇಕವು ನಿನ್ನನ್ನು ತಪ್ಪಿಸುವುದು ಜಾರಳಿಂದ, ಸವಿಮಾತಾಡುವ ಆ ಪರಸ್ತ್ರೀಯಳಿಂದ.</verse>
				<verse number="17">ನಿನ್ನನ್ನು ಅದು ತಪ್ಪಿಸುವುದು ತನ್ನ ಯೌವನಕಾಲದ ಪ್ರಿಯನನ್ನು ತ್ಯಜಿಸಿದವಳಿಂದ, ತನ್ನ ದೇವರ ಮುಂದೆ ಮಾಡಿದ ಒಪ್ಪಂದವನ್ನು ಮರೆತವಳಿಂದ.</verse>
				<verse number="18">ಅವಳ ಮನೆ ಪಾತಾಳಕ್ಕಿಳಿಸುವ ದಾರಿ, ಅವಳ ಮಾರ್ಗ ಪ್ರೇತಲೋಕಕ್ಕೆ ಹಾದಿ.</verse>
				<verse number="19">ಅವಳ ಬಳಿಗೆ ಹೋಗುವವರು ಹಿಂದಿರುಗುವುದಿಲ್ಲ, ಅವರಿಗೆ ಜೀವಮಾರ್ಗ ಪುನಃ ದೊರಕುವುದಿಲ್ಲ.</verse>
				<verse number="20">ನೀನಾದರೊ ಸಜ್ಜನರ ಮಾರ್ಗದಲ್ಲಿ ನಡೆವೆ, ನೀತಿವಂತರ ಹಾದಿಯನ್ನು ಹಿಡಿವೆ.</verse>
				<verse number="21">ಸತ್ಯವಂತರು ನಾಡಿನಲ್ಲಿ ಬಾಳುವರು, ನಿರ್ದೋಷಿಗಳು ಅದರಲ್ಲಿ ನೆಲೆಯಾಗಿರುವರು.</verse>
				<verse number="22">ದುರುಳರಾದರೋ ನಾಡಿನಿಂದ ಬೇರ್ಪಡುವರು, ದ್ರೋಹಿಗಳು ಅಲ್ಲಿಂದ ಅಳಿದು ನಾಶವಾಗುವರು.</verse>
			</chapter>
			<chapter number="3">
				<verse number="1">ಮಗನೇ, ನನ್ನ ಉಪದೇಶವನ್ನು ಮರೆಯಬೇಡ, ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿಡು.</verse>
				<verse number="2">ಅವು ನಿನ್ನ ದಿನಗಳನ್ನು ಹೆಚ್ಚಿಸುತ್ತವೆ; ನಿನಗೆ ದೀರ್ಘಾಯುಸ್ಸನ್ನು ತರುತ್ತವೆ, ನಿನಗೆ ಸುಕ್ಷೇಮವನ್ನು ಉಂಟುಮಾಡುತ್ತವೆ.</verse>
				<verse number="3">ಪ್ರೀತಿ ಸತ್ಯತೆಗಳು ನಿನ್ನನ್ನು ಬಿಡದಿರಲಿ; ಅವು ನಿನ್ನ ಕೊರಳಿನ ಪಟ್ಟಿಯಾಗಿರಲಿ, ಹೃದಯದಹಲಗೆಯಲ್ಲಿ ಲಿಖಿತವಾಗಿರಲಿ.</verse>
				<verse number="4">ಆಗ ದೇವರಿಗೂ ಮಾನವರಿಗೂ ಪ್ರಿಯನಾಗುವೆ, ದಯೆ ದಾಕ್ಷಿಣ್ಯವನ್ನು ಪಡೆಯುವೆ.</verse>
				<verse number="5">ನಿನ್ನ ಸ್ವಂತ ಬುದ್ಧಿಯನ್ನೇ ನೆಚ್ಚಿಕೊಂಡಿರದಿರು; ಪೂರ್ಣ ಮನಸ್ಸಿನಿಂದ ಸರ್ವೇಶ್ವರನಲ್ಲಿ ನಂಬಿಕೆಯಿಡು.</verse>
				<verse number="6">ನಿನ್ನ ನಡತೆಯಲ್ಲೆಲ್ಲಾ ನಿವೇದಿಸು ಆತನನ್ನು, ಆಗ ಸರಾಗಮಾಡುವನು ನಿನ್ನ ಮಾರ್ಗವನ್ನು.</verse>
				<verse number="7">ನೀನೇ ಬುದ್ಧಿವಂತನೆಂದು ಎಣಿಸದಿರು. ಸರ್ವೇಶ್ವರನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.</verse>
				<verse number="8">ಆಗ ನಿನಗೆ ದೇಹಾರೋಗ್ಯ ದೊರಕುವುದು, ನಿನ್ನ ಎಲುಬುಗಳಿಗೆ ಶಕ್ತಿಸಾರತ್ವ ಸಿಗುವುದು.</verse>
				<verse number="9">ನಿನ್ನ ಆಸ್ತಿಯನ್ನರ್ಪಿಸಿ ಸರ್ವೇಶ್ವರನನ್ನು ಸನ್ಮಾನಿಸು, ನಿನ್ನ ಬೆಳೆಯ ಪ್ರಥಮ ಫಲವನ್ನು ಕಾಣಿಕೆಯಾಗಿಕೊಡು.</verse>
				<verse number="10">ಆಗ ನಿನ್ನ ಕಣಜಗಳು ದವಸಧಾನ್ಯದಿಂದ ಭರ್ತಿಯಾಗುವುವು, ನಿನ್ನ ತೊಟ್ಟಿಗಳು ದ್ರಾಕ್ಷಾರಸದಿಂದ ತುಂಬಿ ತುಳುಕುವುವು.</verse>
				<verse number="11">ಮಗನೇ, ಸರ್ವೇಶ್ವರನ ಶಿಕ್ಷೆಯನ್ನು ತಾತ್ಸಾರಮಾಡಬೇಡ, ಆತನು ನೀಡುವ ಎಚ್ಚರಿಕೆಗೆ ಬೇಸರಗೊಳ್ಳಬೇಡ.</verse>
				<verse number="12">ತನ್ನ ಮುದ್ದು ಮಗನನ್ನು ತಂದೆ ಗದರಿಸುವಂತೆ, ಸರ್ವೇಶ್ವರ ತಾನು ಪ್ರೀತಿಸುವವರನ್ನು ಗದರಿಸುತ್ತಾನೆ.</verse>
				<verse number="13">ಜ್ಞಾನವನ್ನು ಕಂಡು ಹಿಡಿಯುವವನು ಧನ್ಯನು, ವಿವೇಕವನ್ನು ಗಳಿಸುವವನು ಭಾಗ್ಯವಂತನು.</verse>
				<verse number="14">ಬೆಳ್ಳಿಗಿಂತ ಜ್ಞಾನ ಗಳಿಕೆ ಶ್ರೇಷ್ಠ, ಬಂಗಾರಕ್ಕಿಂತ ಜ್ಞಾನ ಸಂಪಾದನೆ ಉತ್ಕೃಷ್ಟ.</verse>
				<verse number="15">ಮಾಣಿಕ್ಯಕ್ಕಿಂತ ಜ್ಞಾನದ ಬೆಲೆ ಅಮೂಲ್ಯ. ನಿನಗಿಷ್ಟವಾದುದಾವುದೂ ಅದಕ್ಕೆ ಸಾಟಿಯಿಲ್ಲ.</verse>
				<verse number="16">ದೀರ್ಘಾಯುಷ್ಯ, ಜ್ಞಾನವೆಂಬ ಆಕೆಯ ಬಲಗೈಯಲ್ಲಿದೆ; ಘನತೆ, ಶ್ರೀಮಂತಿಕೆಯೂ ಆಕೆಯ ಎಡಗೈಯಲ್ಲಿವೆ.</verse>
				<verse number="17">ಆಕೆಯ ದಾರಿ ಸುಖಕರ, ಆಕೆಯ ಮಾರ್ಗ ಕ್ಷೇಮಕರ.</verse>
				<verse number="18">ತನ್ನನ್ನು ಅಪ್ಪಿಕೊಂಡವರಿಗೆ ಜ್ಞಾನವು ಜೀವವೃಕ್ಷ; ಅದನ್ನು ಅವಲಂಬಿಸುವ ಪ್ರತಿಯೊಬ್ಬನಿಗೆ ಸೌಭಾಗ್ಯ.</verse>
				<verse number="19">ಸರ್ವೇಶ್ವರಸ್ವಾಮಿ ಜ್ಞಾನದ ಮೂಲಕ ಜಗವನ್ನು ಸ್ಥಾಪಿಸಿದ ವಿವೇಕದ ಮುಖಾಂತರ ಗಗನವನ್ನು ಸ್ಥಿರಗೊಳಿಸಿದ.</verse>
				<verse number="20">ಆತನ ಜ್ಞಾನದಿಂದಲೆ ಅಡಿಸಾಗರ ಒಡೆಯುತ್ತದೆ ಆಕಾಶಮಂಡಲ ಇಬ್ಬನಿಯನ್ನು ಸುರಿಸುತ್ತದೆ.</verse>
				<verse number="21">ಮಗನೇ, ಸುಜ್ಞಾನ, ಸದ್ಬುದ್ಧಿಗಳು ನಿನ್ನಲ್ಲಿ ಸ್ಥಿರವಾಗಿರಲಿ; ನಿನ್ನ ಕಣ್ಣುಗಳಿಂದ ಅವು ಮರೆಯಾಗದಿರಲಿ.</verse>
				<verse number="22">ಅವು ನಿನ್ನಾತ್ಮಕ್ಕೆ ಜೀವಪ್ರದಾನವಾಗಿವೆ, ನಿನ್ನ ಕೊರಳಿಗೆ ಭೂಷಣವಾಗಿವೆ.</verse>
				<verse number="23">ಹೀಗೆ ನೀನು ಎಡವದೆ ನಡೆಯುವೆ, ನಿನ್ನ ಮಾರ್ಗದೊಳು ಭಯವಿಲ್ಲದೆ ಸಾಗುವೆ.</verse>
				<verse number="24">ಮಲಗುವಾಗ ನಿನಗೆ ಹೆದರಿಕೆಯಿರದು, ಮಲಗಿದ ಮೇಲೆ ಸುಖನಿದ್ರೆ ಬರುವುದು.</verse>
				<verse number="25">ಆಕಸ್ಮಿಕ ಅಪಾಯಕ್ಕೆ ನೀನು ಅಂಜಲಾರೆ, ದುರುಳರಿಗೆ ಬಂದೊದಗುವ ನಾಶಕ್ಕೆ ಹೆದರಲಾರೆ.</verse>
				<verse number="26">ಸರ್ವೇಶ್ವರನೇ ನಿನಗೆ ಆಧಾರವಾಗಿರುವನು, ನಿನ್ನ ಕಾಲು ಉರುಲಿಗೆ ಸಿಕ್ಕದಂತೆ ಕಾಪಾಡುವನು.</verse>
				<verse number="27">ನಿನ್ನ ಕೈಲಾದಾಗ ಉಪಕಾರಮಾಡು, ಕೇಳುವವರಿಗೆ ಅದನ್ನು ನಿರಾಕರಿಸಬೇಡ.</verse>
				<verse number="28">ನೆರೆಯವನಿಗೆ ನೀಡಲು ಇದೀಗಲೇ ನಿನ್ನಲ್ಲಿರುವಾಗ, “ಹೋಗಿ ಬಾ, ನಾಳೆ ಕೊಡುತ್ತೇನೆ” ಎನ್ನಬೇಡ.</verse>
				<verse number="29">ಕೇಡನ್ನು ಬಗೆಯಬೇಡ ನೆರೆಯವನಿಗೆ, ಪಕ್ಕದಲ್ಲೆ ನಂಬಿಕೆಯಿಂದ ವಾಸಿಸುವವನಿಗೆ.</verse>
				<verse number="30">ನಿನಗೆ ಕೇಡು ಮಾಡದವನ ಸಂಗಡ, ಕಾರಣವಿಲ್ಲದೆ ಜಗಳವಾಡಬೇಡ.</verse>
				<verse number="31">ಹಿಂಸಾತ್ಮಕನನ್ನು ನೋಡಿ ಹೊಟ್ಟೆಕಿಚ್ಚು ಪಡಬೇಡ, ಅವನ ನಡತೆಯನ್ನು ಎಷ್ಟುಮಾತ್ರಕ್ಕೂ ಅನುಸರಿಸಬೇಡ.</verse>
				<verse number="32">ವಕ್ರಬುದ್ಧಿಯವನು ಸರ್ವೇಶ್ವರನಿಗೆ ಅಸಹ್ಯನು, ಸತ್ಯಸಂಧರು ಆತನಿಗೆ ಪ್ರೀತಿಪಾತ್ರರು.</verse>
				<verse number="33">ದುರುಳರ ಮನೆಯನ್ನು ಸರ್ವೇಶ್ವರ ಶಪಿಸುವನು; ನೀತಿವಂತರ ನಿವಾಸವನ್ನು ಆತ ಆಶೀರ್ವದಿಸುವನು.</verse>
				<verse number="34">ಅಪಹಾಸ್ಯಮಾಡುವವರನ್ನು ಆತ ಅಪಹಾಸ್ಯ ಮಾಡುವನು; ನಮ್ರರಿಗಾದರೋ ಕೃಪಾಶೀರ್ವಾದವನ್ನು ಅನುಗ್ರಹಿಸುವನು.</verse>
				<verse number="35">ಜ್ಞಾನಿಗಳಿಗೆ ಲಭಿಸುವುದು ಸನ್ಮಾನ; ಜ್ಞಾನಹೀನರಿಗೆ ಸಿಗುವ ಸಂಭಾವನೆ ಅವಮಾನ.</verse>
			</chapter>
			<chapter number="4">
				<verse number="1">ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ; ವಿವೇಕ ಸಂಪಾದನೆಯತ್ತ ಗಮನಕೊಡಿರಿ.</verse>
				<verse number="2">ನಾನು ನಿಮಗೆ ನೀಡುವುದು ಸದುಪದೇಶ; ನೀವು ಅದನ್ನು ಕೈಬಿಡಬೇಡಿ.</verse>
				<verse number="3">ನಾನೂ ಕೂಡ ತಂದೆಗೆ ಒಬ್ಬ ಚಿಕ್ಕ ಮಗುವಾಗಿದ್ದೆ, ತಾಯಿಗೆ ಏಕೈಕ ಕುಮಾರನೂ ಕೋಮಲನೂ ಆಗಿದ್ದೆ.</verse>
				<verse number="4">ತಂದೆ ನನಗೆ ಹೀಗೆಂದು ಬೋಧನೆ ಮಾಡಿದ: “ನನ್ನ ಮಾತುಗಳು ಭದ್ರವಾಗಿರಲಿ ನಿನ್ನ ಮನದಲ್ಲಿ; ನನ್ನ ಆಜ್ಞೆಗಳನ್ನು ಕೈಗೊಂಡು ಬಾಳು ಸುಖದಲ್ಲಿ.</verse>
				<verse number="5">ಮರೆಯಬೇಡ, ನನ್ನ ಮಾತಿಗೆ ಓರೆಯಾಗಬೇಡ, ಜ್ಞಾನವನ್ನು ಪಡೆ. ವಿವೇಕವನ್ನು ಗಳಿಸಿಕೊ.</verse>
				<verse number="6">ಜ್ಞಾನವನ್ನು ಕೈಬಿಡದಿದ್ದರೆ, ಅದು ನಿನ್ನನ್ನು ಕಾಪಾಡುವುದು; ನೀನದನ್ನು ಪ್ರೀತಿಸಿದೆಯಾದರೆ, ಅದು ನಿನ್ನನ್ನು ಕಾಯುವುದು.</verse>
				<verse number="7">ಜ್ಞಾನ ಪಡೆಯಬೇಕೆಂಬುದೇ ಜ್ಞಾನಬೋಧೆಯ ಮೂಲಾಂಶ; ನಿನ್ನ ಸರ್ವಸಂಪತ್ತಿನಿಂದ ವಿವೇಕವನ್ನು ಗಳಿಸಿಕೊ.</verse>
				<verse number="8">ಜ್ಞಾನವೆಂಬಾಕೆಯನ್ನು ಶ್ರೇಷ್ಠಳೆಂದು ಭಾವಿಸಿದೆಯಾದರೆ, ಆಕೆ ನಿನ್ನನ್ನು ಸನ್ಮಾನಿಸುವಳು. ನೀನು ಅವಳನ್ನು ಅಪ್ಪಿಕೊಂಡೆಯಾದರೆ, ಆಕೆ ನಿನ್ನನ್ನು ಘನಪಡಿಸುವಳು.</verse>
				<verse number="9">ಅಂದದ ಪುಷ್ಪಮಾಲೆಯನ್ನು ಹಾಕುವಳು ನಿನ್ನ ಕೊರಳಿಗೆ, ಸುಂದರ ಕಿರೀಟವನ್ನು ಮುಡಿಸುವಳು ನಿನ್ನ ತಲೆಗೆ.”</verse>
				<verse number="10">ಮಗನೇ, ನನ್ನ ಮಾತುಗಳನ್ನು ಆಲಿಸಿ ಕೇಳು; ಕೇಳಿದೆಯಾದರೆ ಹೆಚ್ಚುವುವು ನಿನ್ನ ಜೀವನದ ವರ್ಷಗಳು.</verse>
				<verse number="11">ಜ್ಞಾನಮಾರ್ಗವನ್ನು ನಿನಗೆ ಉಪದೇಶಿಸುವೆನು. ಸತ್ಯಮಾರ್ಗದಲ್ಲಿ ನಿನ್ನನ್ನು ನಡೆಸುವೆನು.</verse>
				<verse number="12">ನಡೆಯುವಾಗ ನಿನ್ನ ಹೆಜ್ಜೆಗೆ ತಡೆಯಾಗದು, ನೀ ಓಡುವಾಗ ಮುಗ್ಗರಿಸಿ ಬೀಳಲಾಗದು.</verse>
				<verse number="13">ಸದುಪದೇಶವನ್ನು ಬಿಗಿಹಿಡಿದುಕೊ; ಅದೇ ನಿನ್ನ ಜೀವ, ಅದನ್ನು ಕಾಪಾಡಿಕೊ.</verse>
				<verse number="14">ದುಷ್ಟರ ಸಂಘದಲ್ಲಿ ಸೇರಬೇಡ, ಕೆಟ್ಟವರ ಹಾದಿಯಲ್ಲಿ ಕಾಲಿಡಬೇಡ.</verse>
				<verse number="15">ಆ ದುರ್ಮಾರ್ಗದಿಂದ ಓರೆಯಾಗು, ದೂರವಾಗು; ಅದರಲ್ಲಿ ನಡೆಯದೆ ಮುಂದಕ್ಕೆ ಸಾಗು.</verse>
				<verse number="16">ಕೇಡು ಮಾಡದಿದ್ದರೆ ಆ ದುರುಳರಿಗೆ ನಿದ್ರೆಬಾರದು, ವಂಚಿಸಿ ಬೀಳಿಸದಿದ್ದರೆ ಅವರಿಗೆ ನಿದ್ರೆ ಹತ್ತದು.</verse>
				<verse number="17">ದುಷ್ಟತನವೇ ಅವರಿಗೆ ಅನ್ನ ಆಹಾರ; ಹಿಂಸಾಚಾರವೇ ಅವರಿಗೆ ಮದುಪಾನ.</verse>
				<verse number="18">ಸಜ್ಜನರ ಮಾರ್ಗ ಪ್ರಾತಃಕಾಲದ ಬೆಳಕಿನಂತೆ; ಅದರ ಬೆಳಕು ಹೆಚ್ಚುತ್ತಿರುತ್ತದೆ ಬಟ್ಟ ಹಗಲವರೆಗೆ.</verse>
				<verse number="19">ದುರ್ಜನರ ಮಾರ್ಗ ಕಗ್ಗತ್ತಲಿನ ಹಾಗೆ, ಎಡವಿಬಿದ್ದ ಸ್ಥಳವೇ ತಿಳಿಯದು ಅವರಿಗೆ.</verse>
				<verse number="20">ಮಗನೇ, ನನ್ನ ಮಾತನ್ನು ಆಲಿಸು, ನನ್ನ ನುಡಿಗಳಿಗೆ ಕಿವಿಗೊಡು.</verse>
				<verse number="21">ಅವು ನಿನ್ನ ಕಣ್ಣಿಗೆ ಮರೆಯಾಗದಿರಲಿ, ನಿನ್ನ ಹೃದಯದೊಳಗೆ ಭದ್ರವಾಗಿರಲಿ.</verse>
				<verse number="22">ಕಂಡುಹಿಡಿಯಬಲ್ಲವನಿಗೆ ಅವು ಜೀವದಾಯಕ; ಇಡೀ ದೇಹಕ್ಕೆ ಅವು ಆರೋಗ್ಯಕರ.</verse>
				<verse number="23">ನಿನ್ನ ಹೃದಯವನ್ನು ಕಾಪಾಡು ಜಾಗರೂಕತೆಯಿಂದ; ಏಕೆಂದರೆ ಜೀವಧಾರೆ ಹೊರಡುವುದು ಅದರಿಂದ.</verse>
				<verse number="24">ಸೊಟ್ಟಮಾತುಗಳನ್ನು ನಿನ್ನಿಂದ ತೊಲಗಿಸು, ಕೆಟ್ಟನುಡಿಗಳನ್ನು ಬಾಯಿಂದ ದೂರಮಾಡು.</verse>
				<verse number="25">ನಿನ್ನ ಕಣ್ಣುಗಳು ನೇರವಾಗಿ ನಾಟಿರಲಿ, ಕಣ್ಣು ರೆಪ್ಪೆಗಳು ಮುಂದಾಗಿ ತೆರೆದಿರಲಿ.</verse>
				<verse number="26">ನೀ ನಡೆವ ದಾರಿ ಸಮನಾಗಿರಲಿ, ನೀ ಕೈಗೊಳ್ಳುವ ಹಾದಿ ದೃಢವಾಗಿರಲಿ.</verse>
				<verse number="27">ತಿರುಗಬೇಡ ಎಡಕ್ಕಾಗಲಿ, ಬಲಕ್ಕಾಗಲಿ; ಕೇಡಿನಿಂದ ನಿನ್ನ ಕಾಲು ದೂರವಿರಲಿ.</verse>
			</chapter>
			<chapter number="5">
				<verse number="1">ಮಗನೇ, ನನ್ನ ಜ್ಞಾನೋಪದೇಶವನ್ನು ಆಲಿಸು; ವಿವೇಕದಿಂದ ಕೂಡಿ ನನ್ನ ಬೋಧೆಗೆ ಕಿವಿಗೊಡು.</verse>
				<verse number="2">ಆಗ ನೀನು ವಿವೇಕಶೀಲನಾಗುವೆ; ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಯ್ದುಕೊಳ್ಳುವುವು.</verse>
				<verse number="3">ವ್ಯಭಿಚಾರಿಣಿಯ ತುಟಿಗಳು ಜೇನುಗರೆಯುತ್ತವೆ; ಎಣ್ಣೆಗಿಂತ ಮೃದು ಅವಳ ವಾಣಿ.</verse>
				<verse number="4">ಕಡೆಗೆ ಅವಳು ಕಹಿ ಮಾಚಿಪತ್ರೆಯಂತೆ, ಹರಿತವಾದ ಇಬ್ಬಾಯಿ ಕತ್ತಿಯಂತೆ.</verse>
				<verse number="5">ಅವಳ ಕಾಲುಗಳು ಮರಣದತ್ತ ಇಳಿಯುತ್ತವೆ, ಹೆಜ್ಜೆಗಳು ಪಾತಾಳದತ್ತ ಕೊಂಡೊಯ್ಯುತ್ತವೆ.</verse>
				<verse number="6">ಜೀವಮಾರ್ಗದ ವಿವೇಚನೆ ಅವಳಿಗಿಲ್ಲ. ಅದರ ಅರಿವೂ ಅವಳಿಗಿರುವುದಿಲ್ಲ. ಅವಳ ನಡತೆಯು ಅಷ್ಟು ಚಂಚಲ.</verse>
				<verse number="7">ಇಂತಿರಲು ಮಗನೇ, ನನಗೆ ಕಿವಿಗೊಡು, ನನ್ನ ಮಾತುಗಳನ್ನು ಬಿಟ್ಟು ಅಗಲದಿರು.</verse>
				<verse number="8">ಅವಳಿಂದ ದೂರವಿರಲಿ ನಿನ್ನ ಮಾರ್ಗ, ಸುಳಿಯದಿರು ಅವಳ ಮನೆಬಾಗಿಲ ಹತ್ತಿರ.</verse>
				<verse number="9">ನಿನ್ನ ಪುರುಷತ್ವ ಪರಾಧೀನವಾದೀತು, ಎಚ್ಚರಿಕೆ! ನಿನ್ನ ಆಯುಷ್ಯ ಕ್ರೂರಿಗಳ ವಶವಾದೀತು, ಜೋಕೆ!</verse>
				<verse number="10">ನಿನ್ನ ಸಿರಿಸಂಪತ್ತು ಪರರ ಮನೆ ತುಂಬೀತು, ನಿನ್ನ ದುಡಿಮೆಯ ಫಲ ಅನ್ಯನ ಮನೆ ಸೇರೀತು!</verse>
				<verse number="11">ಕಟ್ಟಕಡೆಗೆ ನಿನ್ನ ದೇಹವೆಲ್ಲ ಕರಗಿಹೋದೀತು; ಅಂಗಲಾಚಿ ನೀ ಕೊರಗಬೇಕಾದೀತು ಇಂತೆಂದು:</verse>
				<verse number="12">“ಅಕಟಕಟಾ ಶಿಸ್ತನ್ನೇ ನಾನು ದ್ವೇಷಿಸಿದೆನಲ್ಲಾ! ನನಗೆ ಕೊಡಲಾದ ತಿದ್ದುಪಾಟನ್ನು ತಾತ್ಸಾರಮಾಡಿದೆನಲ್ಲಾ!</verse>
				<verse number="13">ಗುರುಗಳ ಮಾತನ್ನು ಗಮನಿಸದೆ ಹೋದೆನಲ್ಲಾ! ಬೋಧಕರಿಗೆ ಕಿವಿಗೊಡದೆ ಹೋದೆನಲ್ಲಾ!</verse>
				<verse number="14">ದೇವಜನರ ಸಭೆಕೂಟಗಳಲ್ಲಿ ಎಲ್ಲಾ ತರದ ನಿಂದೆ ಆಪಾದನೆಗಳಿಗೆ ಗುರಿಯಾದೆನಲ್ಲಾ!”</verse>
				<verse number="15">ನಿನ್ನ ಸ್ವಂತ ಕೊಳದ ನೀರನ್ನೇ ಸೇವಿಸು, ನಿನ್ನ ಬಾವಿಯಿಂದ ಉಕ್ಕಿಬರುವ ಜಲವನ್ನೇ ಕುಡಿ.</verse>
				<verse number="16">ನಿನ್ನ ಬುಗ್ಗೆ ಹೊರಗೆ ಹೋಗುವುದು ಸರಿಯೇ? ನಿನ್ನ ಕಾಲುವೆ ಬೀದಿಚೌಕಗಳಲ್ಲಿ ಹರಡಿಕೊಳ್ಳುವುದು ಹಿತವೇ?</verse>
				<verse number="17">ಅವು ನಿನಗೊಬ್ಬನಿಗೇ ಮೀಸಲಾಗಿರಲಿ; ನಿನ್ನೊಡನೆ ಬೇರೊಬ್ಬನ ಪಾಲಾಗದಿರಲಿ.</verse>
				<verse number="18">ನಿನ್ನ ಬುಗ್ಗೆ ದೇವರಿಂದ ಆಶೀರ್ವಾದಹೊಂದಲಿ, ನಿನ್ನ ಆನಂದ ನಿನ್ನ ಯೌವನಕಾಲದ ಹೆಂಡತಿಯಲ್ಲಿರಲಿ.</verse>
				<verse number="19">ಆಕೆ ಮನೋಹರವಾದ ಹರಿಣಿ, ಸುಂದರವಾದ ಜಿಂಕೆಮರಿ, ಆಕೆಯ ಸ್ತನಗಳು ನಿನ್ನನ್ನು ಸರ್ವದಾ ತೃಪ್ತಿಪಡಿಸಲಿ, ಆಕೆಯ ಒಲವಿನಲ್ಲೇ ಸದಾ ತಲ್ಲೀನನಾಗಿರು.</verse>
				<verse number="20">ಮಗನೇ, ಪರಸ್ತ್ರೀಯಲ್ಲಿ ಭ್ರಮೆ ಏಕೆ? ಅನ್ಯಳ ಎದೆ ತಬ್ಬಿಕೊಳ್ಳುವುದೇಕೆ?</verse>
				<verse number="21">ನರನ ಮಾರ್ಗ ಸರ್ವೇಶ್ವರನ ಕಣ್ಣಿಗೆ ಮರೆಯಲ್ಲ; ಆತ ವೀಕ್ಷಿಸುತ್ತಾನೆ ಮನುಷ್ಯನ ನಡತೆಯನ್ನೆಲ್ಲಾ.</verse>
				<verse number="22">ದುರುಳನನ್ನು ಅವನ ದ್ರೋಹಗಳೆ ಆಕ್ರಮಿಸುತ್ತವೆ; ಅವನ ಪಾಪಪಾಶಗಳೇ ಅವನನ್ನು ಬಂಧಿಸುತ್ತವೆ.</verse>
				<verse number="23">ಅವನು ಶಿಸ್ತುಪಾಲನೆಯಿಲ್ಲದೆ ನಾಶವಾಗುತ್ತಾನೆ; ಅತಿ ಮೂರ್ಖತನದಿಂದಲೇ ಮೋಸಹೋಗುತ್ತಾನೆ.</verse>
			</chapter>
			<chapter number="6">
				<verse number="1">ಮಗನೇ, ನೀನು ನೆರೆಯವನ ಸಾಲಕ್ಕೆ ಹೊಣೆಯಾಗಿದ್ದರೆ, ಪರನಿಗಾಗಿ ಕೈಮೇಲೆ ಕೈಯಿಟ್ಟು ಪ್ರಮಾಣಮಾಡಿದ್ದರೆ,</verse>
				<verse number="2">ನಿನ್ನ ಮಾತಿನ ಬಲೆಗೆ ಸಿಕ್ಕಿಹಾಕಿಕೊಂಡಿರುವೆ; ನಿನ್ನ ವಾಗ್ದಾನವು ನಿನ್ನನ್ನು ಸೆರೆಹಿಡಿದಿದೆ.</verse>
				<verse number="3">ಮಗನೇ, ನೀನು ನೆರೆಯವನ ಕೈವಶವಾಗಿರುವೆ; ಈ ಪರಿಮಾಡು ತಪ್ಪಿಸಿಕೊಳ್ಳಬೇಕಾದರೆ:</verse>
				<verse number="4">ನಿನ್ನ ಕಣ್ಣುಗಳಿಗೆ ನಿದ್ರೆಕೊಡಬೇಡ, ನಿನ್ನಾಕಣ್ಣಿನ ರೆಪ್ಪೆಗಳನ್ನು ಮುಚ್ಚಬೇಡ.</verse>
				<verse number="5">ಬೇಡನಿಂದ ಓಡುವ ಜಿಂಕೆಯಂತೆ, ಬೇಟೆಗಾರನ ಕೈಯಿಂದ ಹಾರಿಹೋಗುವ ಹಕ್ಕಿಯಂತೆ, ಆ ಬಲೆಯಿಂದ ತಪ್ಪಿಸಿಕೊ.</verse>
				<verse number="6">ಎಲೈ ಸೋಮಾರಿಯೇ, ಇರುವೆಯ ಬಳಿಗೆ ಹೋಗು; ಅದರ ನಡವಳಿಕೆಯನ್ನು ನೋಡಿ ಜ್ಞಾನಿಯಾಗು.</verse>
				<verse number="7">ಅದಕ್ಕಿಲ್ಲ ನೋಡು ನಾಯಕ, ಅರಸ ಅಧಿಪತಿ.</verse>
				<verse number="8">ಆದರೂ ಕೂಡಿಸುತ್ತದೆ ತಿಂಡಿ ಬೇಸಿಗೆಯಲ್ಲಿ, ಸಂಗ್ರಹಿಸುತ್ತದೆ ಧಾನ್ಯ ಸುಗ್ಗಿಯಲ್ಲಿ.</verse>
				<verse number="9">ಸೋಮಾರಿಯೇ, ಎಷ್ಟು ಹೊತ್ತು ನಿದ್ರಿಸುವೆ? ನಿದ್ರೆಯಿಂದ ಯಾವಾಗ ಎಚ್ಚರಗೊಳ್ಳುವೆ?</verse>
				<verse number="10">“ಇನ್ನೂ ಸ್ವಲ್ಪ ನಿದ್ರೆ, ತುಸು ತೂಕಡಿಕೆ” ಎನ್ನುವೆಯಾ? “ಕೊಂಚವೇ ನಿದ್ರೆಗಾಗಿ ಕೈ ಮಡಿಚಿಕೊಳ್ಳುವೆ” ಎನ್ನುವೆಯಾ?</verse>
				<verse number="11">ಬಡತನ ನಿನ್ನ ಮೇಲೆರಗುವುದು ದಾರಿಗಳ್ಳನಂತೆ; ಅಭಾವ ನಿನ್ನ ಮೇಲೆ ಬೀಳುವುದು ಪಂಜುಗಳ್ಳನಂತೆ.</verse>
				<verse number="12">ದುರುಳನೂ ನೀಚನೂ ಆದವನ ನಡತೆಯನ್ನು ನೋಡು: ಅವನ ಬಾಯಿಂದ ಹೊರಡುವುದು ಕುಟಿಲ ಮಾತು.</verse>
				<verse number="13">ಅವನು ಕಣ್ಣು ಮಿಟುಕಿಸುತ್ತಾನೆ, ಕಾಲು ಕೆರೆಯುತ್ತಾನೆ, ಬೆರಳ ಸನ್ನೆಯಿಂದಲೆ ಮಾತಾಡುತ್ತಾನೆ.</verse>
				<verse number="14">ಅವನ ಮನದಲ್ಲಿರುವುದು ಮೂರ್ಖತನ; ಅವನು ಸತತ ಕಲ್ಪಿಸುವುದು ಕೆಡುಕುತನ. ಅವನು ಬಿತ್ತನೆ ಮಾಡುವುದು ಕಾಳಗ, ಕದನ.</verse>
				<verse number="15">ಆದ್ದರಿಂದ ತಟ್ಟನೆ ಒದಗುವುದು ವಿಪತ್ತು ಮತ್ತೆ ಏಳಲಾಗದಂತಹ ಕಠಿಣ ಆಪತ್ತು.</verse>
				<verse number="16">ಸರ್ವೇಶ್ವರ ಹಗೆಮಾಡುವಂಥಹವು ಆರು: ಆತ ಖಂಡನೆ ಮಾಡುವಂಥಹವು ಏಳು: ಅಹಂಕಾರ ದೃಷ್ಟಿ, ಕಪಟವಾಡುವ ನಾಲಿಗೆ, ನಿರಪರಾಧಿಯನ್ನು ಕೊಲೆಮಾಡುವ ಕೈ, ದುರಾಲೋಚನೆಯನ್ನು ಕಲ್ಪಿಸುವ ಹೃದಯ, ಕೇಡುಮಾಡಲು ತವಕಪಡುವ ಕಾಲು, ಅಸತ್ಯವನ್ನು ಉಸುರುವ ಸುಳ್ಳುಸಾಕ್ಷಿ, ಸೋದರರಲ್ಲಿ ಜಗಳ ಹುಟ್ಟಿಸುವ ವ್ಯಕ್ತಿ.</verse>
				<verse number="17"></verse>
				<verse number="18"></verse>
				<verse number="19"></verse>
				<verse number="20">ಮಗನೇ, ನಿನ್ನ ತಂದೆಯ ಆಜ್ಞೆಗೆ ಕಿವಿಗೊಡು, ನಿನ್ನ ತಾಯಿಯ ಉಪದೇಶವನ್ನು ತೊರೆಯದೆ ಮಾಡು.</verse>
				<verse number="21">ಅವನ್ನು ನಿರಂತರವಾಗಿ ಹೃದಯಕ್ಕೆ ಬಂಧಿಸಿಕೊ; ಕಂಠಾಭರಣವಾಗಿ ಕೊರಳಿಗೆ ಧರಿಸಿಕೊ.</verse>
				<verse number="22">ನಡೆಯುವಾಗ ಅವು ನಿನಗೆ ಮುಂದಾಳಾಗಿರುವುವು, ಮಲಗುವಾಗ ಅವು ನಿನ್ನನ್ನು ಕಾಯುವುವು, ಎಚ್ಚರಗೊಂಡಾಗ ಅವು ನಿನ್ನೊಡನೆ ಸಂವಾದಿಸುವುವು.</verse>
				<verse number="23">ಏಕೆಂದರೆ ಆಜ್ಞೆಯೇ ಜ್ಯೋತಿ, ಬೋಧನೆಯೇ ಬೆಳಕು, ಶಿಸ್ತಿನಿಂದ ಕೂಡಿದ ಶಿಕ್ಷಣವೇ ಜೀವನಕ್ಕೆ ಮಾರ್ಗ.</verse>
				<verse number="24">ಕೆಟ್ಟ ಹೆಂಗಸರ ಸಹವಾಸದಿಂದ, ಪರಸ್ತ್ರೀಯರ ಮಾತಿನ ಮೋಡಿಯಿಂದ, ಅವು ಕಾಪಾಡಬಲ್ಲವು ನಿನ್ನನ್ನು.</verse>
				<verse number="25">ನಿನ್ನ ಹೃದಯ ಅವಳ ಬೆಡಗನ್ನು ಮೋಹಿಸದಿರಲಿ; ಕಣ್ಣು ಮಿಟುಕಿಸಿ ಅವಳು ನಿನ್ನನ್ನು ವಶಮಾಡಿಕೊಳ್ಳದಿರಲಿ.</verse>
				<verse number="26">ವೇಶ್ಯೆಯನ್ನು ಕೊಂಡುಕೊಳ್ಳಬಹುದು ತುಂಡುರೊಟ್ಟಿಗೆ, ವ್ಯಭಿಚಾರಿಣಿಯೇ ಬೇಟೆಮಾಡುವಳು ನಿನ್ನ ಸಿರಿಪ್ರಾಣಕ್ಕೆ!</verse>
				<verse number="27">ಮಡಿಲಲ್ಲಿ ಬೆಂಕಿಯನ್ನು ಇಟ್ಟುಕೊಂಡರೆ ಬಟ್ಟೆಯನ್ನು ಸುಡದೆ ಸುಮ್ಮನಿರುವುದೆ?</verse>
				<verse number="28">ಧಗಧಗಿಸುವ ಕೆಂಡದ ಮೇಲೆ ನಡೆದರೆ ಅಂಗಾಲು ಸುಟ್ಟುಹೋಗದೆ ಇರುವುದೆ?</verse>
				<verse number="29">ಅಂತೆಯೆ ನೆರೆಯವನ ಸತಿಯನ್ನು ಕೂಡುವವನ ಗತಿಯು; ಆಕೆಯನ್ನು ಮುಟ್ಟುವವನು ತಪ್ಪಿಸಿಕೊಳ್ಳನು ದಂಡನೆಯನ್ನು.</verse>
				<verse number="30">ಹಸಿವನ್ನು ನೀಗಿಸಿಕೊಳ್ಳಲು ಕಳವು ಮಾಡಿದರೆ, ಅಷ್ಟು ಹೀಯಾಳಿಸರು ಜನರು ಅಂಥ ಬಡವನನ್ನು.</verse>
				<verse number="31">ಆದರೂ ಕಳವು ಬಯಲಾದರೆ ತೆರಬೇಕಾಗುವುದು ಏಳರಷ್ಟು; ತೆತ್ತೇ ತೀರಿಸಬೇಕಾಗುವುದು ಮನೆಯ ಆಸ್ತಿಪಾಸ್ತಿಯಷ್ಟು.</verse>
				<verse number="32">ವ್ಯಭಿಚಾರಿಯು ಕೇವಲ ಬುದ್ಧಿಶೂನ್ಯನು; ತನ್ನೀ ಕೃತ್ಯದಿಂದ ಸ್ವನಾಶಮಾಡಿಕೊಳ್ಳುವನು.</verse>
				<verse number="33">ಪೆಟ್ಟಿಗೂ ಅಪಕೀರ್ತಿಗೂ ಅವನು ಪಾತ್ರನು; ಅವನಿಗಾಗುವ ಅವಮಾನ ತೊಲಗದು ಎಂದಿಗು.</verse>
				<verse number="34">ಏಕೆಂದರೆ, ಅವಳ ಪತಿಗಾಗುವ ಮತ್ಸರ ಉದ್ರೇಕಗೊಳ್ಳುವುದು; ಕನಿಕರ ತೋರನು, ಮುಯ್ಯಿ ತೀರಿಸುವ ದಿನದಂದು.</verse>
				<verse number="35">ಯಾವ ಪ್ರಾಯಶ್ಚಿತ್ತಕ್ಕೂ ಅವನು ಒಪ್ಪನು; ಎಷ್ಟು ಲಂಚಕೊಟ್ಟರೂ ಒಲಿಯನು, ಮಣಿಯನು.</verse>
			</chapter>
			<chapter number="7">
				<verse number="1">ಮಗನೇ, ನನ್ನ ಮಾತುಗಳನ್ನು ಅನುಸರಿಸು, ನನ್ನ ಆಜ್ಞೆಗಳನ್ನು ಮನಸ್ಸಿನಲ್ಲಿ ಇಡು.</verse>
				<verse number="2">ಕನೀನಿಕೆಯಂತೆ ನನ್ನ ಕಟ್ಟಳೆಯನ್ನು ಪಾಲಿಸು, ನನ್ನ ಆಜ್ಞೆಗಳನ್ನು ಕೈಗೊಂಡು ಬಾಳು.</verse>
				<verse number="3">ಅವು ನಿನ್ನ ಬೆರಳಿಗೆ ಉಂಗುರವಾಗಿರಲಿ, ನಿನ್ನ ಹೃದಯದ ಹಲಗೆಯಲ್ಲಿ ಬರೆದಿರಲಿ.</verse>
				<verse number="4">ಜ್ಞಾನವನ್ನು ‘ಅಕ್ಕಾ’ ಎಂದು ಕರೆ; ವಿವೇಕವನ್ನು ಆಪ್ತಳೆಂದು ಬಗೆ.</verse>
				<verse number="5">ಅವು ನಿನ್ನನ್ನು ಕಾಪಾಡುವುವು ವ್ಯಭಿಚಾರಿಣಿಯಿಂದ, ಸವಿಮಾತಾಡುವ ಆ ಪರಸ್ತ್ರೀಯಿಂದ.</verse>
				<verse number="6">ಒಮ್ಮೆ ಮನೆಯ ಕಿಟಕಿಯಿಂದ ಇಣಕಿನೋಡುವಾಗ,</verse>
				<verse number="7">ಜನಸಾಮಾನ್ಯರ ನಡುವೆ, ಯೌವನಸ್ಥರ ಮಧ್ಯೆ ಮತಿಗೆಟ್ಟ ಯುವಕನೊಬ್ಬ ನಡೆವುದನ್ನು ನಾನು ಕಂಡೆ.</verse>
				<verse number="8">ಹೊತ್ತು ಮೀರಿ, ಸಂಜೆಯಾಗಿ, ಕತ್ತಲು ಕವಿದಿದ್ದಾ ರಾತ್ರಿಯಲ್ಲಿ, ಅವನು ಹಾದುಹೋಗುತ್ತಿದ್ದ ಬೀದಿಯ ಮೂಲೆ ಮನೆಯ ಬಳಿ.</verse>
				<verse number="9">ಒಬ್ಬಾಕೆಯ ಮನೆಯ ಕಡೆಗೆ ಆತ ತಿರುಗುವುದನ್ನು ನಾ ಕಂಡೆ;</verse>
				<verse number="10">ಇಗೋ, ಅವನನ್ನು ಎದುರುಗೊಳ್ಳುತ್ತಾಳೆ ವೇಷಧಾರಿಯಾದ ಕಪಟಸ್ತ್ರೀಯೊಬ್ಬಳು.</verse>
				<verse number="11">ಹಟಮಾರಿ, ಕೂಗಾಟದವಳು, ಮನೆಯಲ್ಲಿ ನಿಲ್ಲಲಾರದವಳು.</verse>
				<verse number="12">ಹೊಂಚುಹಾಕುತ್ತಾಳೆ ಅವಳು ಮೂಲೆ ಮೂಲೆಗಳಲ್ಲಿ; ಒಮ್ಮೆ ಬೀದಿಯಲ್ಲಿ ಮತ್ತೊಮ್ಮೆ ಚೌಕಗಳಲ್ಲಿ.</verse>
				<verse number="13">ಅವನನ್ನು ಬಿಗಿಹಿಡಿದು ಮುದ್ದಾಡುತ್ತಾಳೆ. ಲಜ್ಜೆಗೆಟ್ಟ ಮೋರೆಯುಳ್ಳ ಅವಳು ಹೀಗೆನ್ನುತ್ತಾಳೆ:</verse>
				<verse number="14">“ನನ್ನ ಬಯಕೆ ಈಡೇರಲೆಂದು ಬಲಿಯರ್ಪಿಸಿದ್ದೇನೆ; ಇಂದೇ ನನ್ನ ಹರಕೆಯನ್ನು ತೀರಿಸಿದ್ದೇನೆ.</verse>
				<verse number="15">ಎಂತಲೇ ನಿನ್ನನ್ನು ಎದುರುಗೊಳ್ಳಲು ಬಂದೆ ಆಕಾಂಕ್ಷೆಯಿಂದ ಹುಡುಕಿ; ಇಗೋ ನಿನ್ನನ್ನು ಕಂಡುಕೊಂಡೆ.</verse>
				<verse number="16">ಮೆತ್ತೆ ಸುಪ್ಪತ್ತಿಗೆಯಿಂದ, ಚಿತ್ರವಿಚಿತ್ರ ವಸ್ತುಗಳಿಂದ, ಈಜಿಪ್ಟಿನ ನಾರುಮಡಿಯಿಂದ ಸಿದ್ಧಮಾಡಿರುವೆ ಹಾಸಿಗೆಯನ್ನು.</verse>
				<verse number="17">ರಸಗಂಧ, ಅಗರು, ಲವಂಗ ಚಕ್ಕೆಗಳಿಂದ ಅದನ್ನು ಘಮಘಮಗೊಳಿಸಿರುವೆ.</verse>
				<verse number="18">ಬೆಳಗಿನ ತನಕ ಬೇಕಾದಷ್ಟು ರಮಿಸೋಣ ಬಾ, ಕಾಮವಿಲಾಸಗಳಿಂದ ಸಂತೃಪ್ತಿ ಪಡೆಯೋಣ ಬಾ.</verse>
				<verse number="19">ಯಜಮಾನ ಮನೆಯಲ್ಲಿ ಇಲ್ಲ; ಕೈಗೊಂಡು ಇದ್ದಾನೆ ದೂರ ಪ್ರಯಾಣ.</verse>
				<verse number="20">ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ; ಮನೆಗೆ ಬರುವಂತಿಲ್ಲ ಹುಣ್ಣಿಮೆಯ ತನಕ.”</verse>
				<verse number="21">ಹೀಗೆ ಮೋಹಕ ಮಾತುಗಳಿಂದ ಒತ್ತಾಯಪಡಿಸುತ್ತಾಳೆ, ಅತಿಯಾದ ಒಲುಮೆಯಿಂದ ಪುಸಲಾಯಿಸುತ್ತಾಳೆ.</verse>
				<verse number="22">ವಧ್ಯಸ್ಥಾನಕ್ಕೆ ಹೋಗುವ ಹೋರಿಯಂತೆ, ಬಲೆಗೆ ಸಿಕ್ಕಿಬೀಳುವ ಜಿಂಕೆಯಂತೆ,</verse>
				<verse number="23">ಉರುಳಿನತ್ತ ಹಾರುವ ಹಕ್ಕಿಯಂತೆ, ಕರುಳನ್ನು ತಿವಿಯುವ ಬಾಣದಂತೆ, ತನ್ನ ಪ್ರಾಣಕ್ಕಿರುವ ಅಪಾಯವನ್ನು ತಿಳಿಯದೆ, ಅವಳನ್ನು ತಡಮಾಡದೆ ಹಿಂಬಾಲಿಸುತ್ತಾನೆ ಆತ.</verse>
				<verse number="24">ಆದ್ದರಿಂದ ಮಕ್ಕಳೇ, ನನಗೆ ಕಿವಿಗೊಡಿರಿ; ನನ್ನ ಮಾತುಗಳನ್ನು ಆಲಿಸಿರಿ.</verse>
				<verse number="25">ನಿಮ್ಮ ಹೃದಯ ಅವಳ ದಾರಿಯತ್ತ ತಿರುಗದಿರಲಿ; ಅಪ್ಪಿತಪ್ಪಿ ನಿಮ್ಮ ಕಾಲು ಅವಳ ಹಾದಿಯನ್ನು ತುಳಿಯದಿರಲಿ.</verse>
				<verse number="26">ಅವಳಿಗೆ ಬಲಿಯಾಗಿ ಬಿದ್ದವರು ಬಹುಮಂದಿ; ಹತರಾದವರೋ ಲೆಕ್ಕವಿಲ್ಲದಷ್ಟು ಮಂದಿ.</verse>
				<verse number="27">ಅವಳ ಮನೆ ಪಾತಾಳಕ್ಕೆ ಹಾದಿ; ಮರಣದ ಗುಡಾರಗಳಿಗೆ ಇಳಿದಾರಿ.</verse>
			</chapter>
			<chapter number="8">
				<verse number="1">ಕೇಳಿ, ಜ್ಞಾನವೆಂಬಾಕೆ ಕರೆಯುತ್ತಾಳೆ ವಿವೇಕವೆಂಬಾಕೆ ಕೂಗಿ ಕರೆಯುತ್ತಿದ್ದಾಳೆ!</verse>
				<verse number="2">ಹೆದ್ದಾರಿಯ ಅಕ್ಕಪಕ್ಕದ ದಿಣ್ಣೆಗಳಲ್ಲಿ ಹಾದಿಬೀದಿಗಳ ನಡುವಿನಲ್ಲಿ ನಿಂತಿದ್ದಾಳೆ, ನೋಡಿ</verse>
				<verse number="3">ನಗರದ ಹೆಬ್ಬಾಗಿಲುಗಳಲ್ಲೂ ಜನಸೇರುವ ಪ್ರವೇಶದ್ವಾರಗಳಲ್ಲೂ ಘೋಷಿಸುತ್ತಾಳೆ ಹೀಗೆಂದು:</verse>
				<verse number="4">ಮನುಜರೇ, ನಾನು ಕರೆಯುತ್ತಿರುವುದು ನಿಮ್ಮನ್ನೆ ನಾನು ಕೂಗಿ ಕರೆಯುತ್ತಿರುವುದು ಮಾನವ ಕುಲಪುತ್ರರನ್ನೆ.</verse>
				<verse number="5">ಮೂಢರೇ, ಕಲಿತುಕೊಳ್ಳಿ ಜಾಣತನವನ್ನು ಬುದ್ಧಿಹೀನರೇ, ಗ್ರಹಿಸಿರಿ ಸನ್ಮತಿಯನ್ನು.</verse>
				<verse number="6">ಕೇಳಿ, ನಾನು ಹೇಳುವ ಮಹತ್ವಪೂರ್ಣವಾದ ವಿಷಯವನ್ನು ನನ್ನ ನಾಲಿಗೆ ನುಡಿಯುವ ಯಥಾರ್ಥವಾದ ಸಂಗತಿಯನ್ನು</verse>
				<verse number="7">ನನ್ನ ಬಾಯಿಂದ ಬರುತ್ತಿರುವುದು ಸತ್ಯ ನನ್ನ ತುಟಿಗೆ ದುಷ್ಟತನ ಅಸಹ್ಯ.</verse>
				<verse number="8">ನನ್ನ ಮಾತುಗಳೆಲ್ಲ ನೀತಿಭರಿತ ಅವುಗಳಲ್ಲಿ ಇಲ್ಲ ಕುಟಿಲ, ಕುತಂತ್ರ.</verse>
				<verse number="9">ತಿಳುವಳಿಕೆ ಉಳ್ಳವನಿಗೆ ಅವೆಲ್ಲ ಸರಳ ಗ್ರಹಿಕೆ ಉಳ್ಳವನಿಗೆ ಅವು ಯಥಾರ್ಥ.</verse>
				<verse number="10">ಅಂಗೀಕರಿಸಿರಿ ಬೆಳ್ಳಿಗಿಂತ ಶ್ರೇಷ್ಠವಾದ ಬೋಧನೆಯನ್ನು ಅಪರಂಜಿಗಿಂತ ಅಪೂರ್ವವಾದ ಉಪದೇಶವನ್ನು.</verse>
				<verse number="11">ಜ್ಞಾನವೆಂಬುದು ಹವಳಕ್ಕಿಂತ ಶ್ರೇಷ್ಠ, ಇಷ್ಟವಸ್ತುಗಳಾವುವು ಅದಕ್ಕೆ ಸಾಟಿಯಿಲ್ಲ.</verse>
				<verse number="12">ಜ್ಞಾನವೆಂಬ ನನಗೆ ಜಾಣ್ಮೆಯೆ ಸಹವಾಸಿ ಯುಕ್ತ ತಿಳುವಳಿಕೆ ನನಗೆ ಸಂಗಾತಿ.</verse>
				<verse number="13">ದೈವಭಯದಿಂದ ಹುಟ್ಟುತ್ತದೆ ಪಾಪದ್ವೇಷ; ಗರ್ವ, ಅಹಂಕಾರ, ದುರಾಚಾರ, ಕಪಟ ಭಾಷಣ ನನಗೆ ಅಸಹ್ಯ.</verse>
				<verse number="14">ಸದಾಲೋಚನೆ, ಸುಜ್ಞಾನ, ವಿವೇಕ ನನ್ನಲ್ಲಿವೆ; ಎಂತಲೇ ಶಕ್ತಿಸಾಮರ್ಥ್ಯ ಹೊಂದಿರುವೆ.</verse>
				<verse number="15">ರಾಜರು ಆಳುವುದು ನನ್ನ ಸಹಾಯದಿಂದ ಅಧಿಪತಿಗಳು ನ್ಯಾಯತೀರ್ಪು ಮಾಡುವುದು ನನ್ನಿಂದ.</verse>
				<verse number="16">ನನ್ನ ಮೂಲಕ ಭೂಪತಿಗಳು ರಾಜ್ಯ ಆಳುವರು ನಾಯಕರು ಭೂಮಿಯ ಮೇಲೆ ದೊರೆತನ ಮಾಡುವರು.</verse>
				<verse number="17">ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ ಹಂಬಲಿಸಿ ಹುಡುಕುವವರು ನನ್ನನ್ನು ಕಂಡುಕೊಳ್ಳುತ್ತಾರೆ.</verse>
				<verse number="18">ನನ್ನಲ್ಲಿವೆ ಶ್ರೀಮಂತಿಕೆ ಮತ್ತು ಘನತೆ ಶಾಶ್ವತ ಸಂಪತ್ತು ಹಾಗೂ ಸಮೃದ್ಧಿ.</verse>
				<verse number="19">ನಾನು ನೀಡುವ ಫಲ ಬಂಗಾರಕ್ಕಿಂತ ಶ್ರೇಷ್ಠ ನನ್ನಿಂದ ದೊರಕುವ ಆದಾಯ ಅಪ್ಪಟ ಬೆಳ್ಳಿಗಿಂತ ಅಮೂಲ್ಯ.</verse>
				<verse number="20">ನಾನು ಹಿಡಿದಿರುವ ಹಾದಿ ನೀತಿಯುತ ನಾನು ನಡೆಯುವುದು ನ್ಯಾಯಪಥ.</verse>
				<verse number="21">ನನ್ನನ್ನು ಪ್ರೀತಿಸುವವರಿಗೆ ದೊರಕಿಸುವೆ ಸಿರಿಸಂಪತ್ತನ್ನು ಬಾಧ್ಯವಾಗಿ ನಾನವರ ಬೊಕ್ಕಸಗಳನ್ನು ತುಂಬಿಸುವೆ ಭರ್ತಿಯಾಗಿ.</verse>
				<verse number="22">ತನ್ನ ಸೃಷ್ಟಿಕ್ರಮದಲ್ಲಿ ಸರ್ವೇಶ್ವರ ನಿರ್ಮಿಸಿದ ನನ್ನನ್ನು ಮೊತ್ತಮೊದಲು ಆತನ ಪುರಾತನ ಕಾರ್ಯಕ್ರಮಗಳಲ್ಲಿ ನಾನೇ ಪ್ರಥಮಳು.</verse>
				<verse number="23">ನಾನು ಸ್ಥಾಪಿಸಲ್ಪಟ್ಟೆ ಪ್ರಾರಂಭದಲ್ಲೆ ಜಗದುತ್ಪತ್ತಿಗೆ ಮುಂಚೆಯೇ, ಅನಾದಿಕಾಲದಲ್ಲೆ.</verse>
				<verse number="24">ಜಲನಿಧಿಗಳಾಗಲಿ, ನೀರಿನ ಬುಗ್ಗೆಗಳಾಗಲಿ ಇಲ್ಲದಿರುವಾಗಲೆ ನಾ ಬಂದೆ ಜನ್ಮತಾಳಿ.</verse>
				<verse number="25">ನಾನು ಹುಟ್ಟಿದೆ ಬೆಟ್ಟಗುಡ್ಡಗಳು ಬೇರೂರಿ ನಿಲ್ಲುವುದಕ್ಕೆ ಮೊದಲೆ.</verse>
				<verse number="26">ನಾನು ಜನಿಸಿದೆ ಭೂಮಿಯನ್ನಾಗಲಿ, ಬೈಲನ್ನಾಗಲಿ ನೆಲದ ಅಣುರೇಣನ್ನಾಗಲಿ ಆತ ನಿರ್ಮಿಸದೆ ಇರುವಾಗಲೆ.</verse>
				<verse number="27">ನಾನು ಅಲ್ಲಿದ್ದೆ ಆತ ಆಕಾಶಮಂಡಲವನ್ನು ಸ್ಥಾಪಿಸುವಾಗ ಸಾಗರದ ಮೇಲೆ ಚಕ್ರಾಕಾರದ ಗೆರೆಯನ್ನು ಎಳೆವಾಗ,</verse>
				<verse number="28">ಗಗನವನ್ನು ಮೇಲೆ ಸ್ಥಿರಪಡಿಸುವಾಗ ಸಾಗರದ ಸೆಲೆಗಳನ್ನು ನೆಲೆಗೊಳಿಸಿದಾಗ,</verse>
				<verse number="29">ಜಲಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಸಮುದ್ರಕ್ಕೆ ಎಲ್ಲೆಕಟ್ಟನ್ನು ನೇಮಿಸುವಾಗ ಭೂಮಿಯ ಅಸ್ತಿಭಾರವನ್ನು ಗೊತ್ತುಮಾಡುವಾಗ.</verse>
				<verse number="30">ನಾನು ಆತನ ಬಳಿ ಕುಶಲ ಶಿಲ್ಪಿಯಂತಿದ್ದೆ ಅನುದಿನವೂ ಆತನಿಗೆ ಆನಂದವನ್ನೀಯುತ್ತಿದ್ದೆ ಸದಾ ಆತನ ಮುಂದೆ ಸಂತೋಷಪಡುತ್ತಿದ್ದೆ.</verse>
				<verse number="31">ಉಲ್ಲಾಸಿಸುತ್ತಿದ್ದೆ ಆತನ ಭೂಲೋಕದಲ್ಲಿ ಹರ್ಷಿಸುತ್ತಾ ಇದ್ದೆ ಮಾನವ ಸಂತಾನದಲ್ಲಿ.</verse>
				<verse number="32">ಆದ್ದರಿಂದ ಮಕ್ಕಳೇ, ಕಿವಿಗೊಡಿ ನನಗೀಗ ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರೆಂಬುದು ನಿಜ.</verse>
				<verse number="33">ಉಪದೇಶವನ್ನು ಕೇಳಿ ಬುದ್ಧಿವಂತರಾಗಿರಿ ಅದನ್ನು ನೀವು ನಿರಾಕರಿಸಬೇಡಿ.</verse>
				<verse number="34">ನನ್ನ ಬಾಗಿಲಬಳಿ ಪ್ರತಿದಿನ ಕಾಯುತ್ತಾ ನನ್ನ ಹೊಸಲಿನತ್ತ ನಿರೀಕ್ಷಿಸಿ ನೋಡುತ್ತಾ ನನ್ನ ಮಾತನ್ನು ಆಲಿಸುವವನು ಭಾಗ್ಯವಂತ.</verse>
				<verse number="35">ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಳ್ಳುವನು ಸರ್ವೇಶ್ವರನ ಕೃಪಾಕಟಾಕ್ಷಕ್ಕೆ ಪಾತ್ರನಾಗುವನು.</verse>
				<verse number="36">ನನಗೆ ತಪ್ಪುಮಾಡುವವನು ತನ್ನಾತ್ಮಕ್ಕೇ ಕೇಡುಮಾಡುತ್ತಾನೆ ನನ್ನನ್ನು ಹಗೆಮಾಡುವವರೆಲ್ಲರು ಮೃತ್ಯುವನ್ನು ಪ್ರೀತಿಸುತ್ತಾರೆ.</verse>
			</chapter>
			<chapter number="9">
				<verse number="1">ಜ್ಞಾನವೆಂಬಾಕೆ ಮನೆಯನ್ನು ಕಟ್ಟಿಕೊಂಡಿದ್ದಾಳೆ; ಅದಕ್ಕೆ ಏಳು ಸ್ತಂಭಗಳನ್ನು ಕೆತ್ತಿಸಿದ್ದಾಳೆ.</verse>
				<verse number="2">ಪಶುಗಳನ್ನು ಕೊಯ್ಯಿಸಿ ದ್ರಾಕ್ಷಾರಸವನ್ನು ಬೆರೆಸಿ ಔತಣವನ್ನು ಆಕೆ ಸಿದ್ಧಪಡಿಸುತ್ತಿದ್ದಾಳೆ.</verse>
				<verse number="3">ನಗರದ ರಾಜಬೀದಿಗಳಿಗೆ ತನ್ನ ದಾಸಿಯರನ್ನು ಕಳುಹಿಸುತ್ತಾಳೆ.</verse>
				<verse number="4">“ಮುಗ್ಧಮನಸ್ಕರು ಯಾರಾದರೂ ಇದ್ದರೆ ಇತ್ತ ಬರಲಿ” ಎಂದು ಪ್ರಕಟಿಸುತ್ತಾಳೆ.</verse>
				<verse number="5">“ಬನ್ನಿ, ನಾ ಬಡಿಸುವ ಆಹಾರವನ್ನು ಉಣಬನ್ನಿ; ನಾ ಬೆರೆಸಿದ ದ್ರಾಕ್ಷಾರಸವನ್ನು ಕುಡಿಯಬನ್ನಿ.</verse>
				<verse number="6">ಮೂಢರೇ, ನಿಮ್ಮ ಮೂಢತ್ವವನ್ನು ಬಿಟ್ಟುಬಾಳಿರಿ, ವಿವೇಕ ಮಾರ್ಗದಲ್ಲಿ ನೆಟ್ಟಗೆ ನಡೆಯಿರಿ,” ಎಂದು ಪ್ರಬೋಧಿಸುತ್ತಾಳೆ.</verse>
				<verse number="7">ಕುಚೋದ್ಯಗಾರರನ್ನು ಶಿಕ್ಷಿಸುವವನು ತನ್ನನ್ನೆ ಅಪಮಾನಕ್ಕೆ ಗುರಿಮಾಡಿಕೊಳ್ಳುತ್ತಾನೆ. ದುಷ್ಟನನ್ನು ಗದರಿಸುವವನು ತನಗೇ ಕಳಂಕ ತಂದುಕೊಳ್ಳುತ್ತಾನೆ.</verse>
				<verse number="8">ಕುಚೋದ್ಯಗಾರನನ್ನು ಗದರಿಸಬೇಡ, ಅವನು ನಿನ್ನನ್ನು ದ್ವೇಷಿಸುವನು. ಜ್ಞಾನವಂತನನ್ನು ಗದರಿಸು, ಅವನು ನಿನ್ನನ್ನು ಪ್ರೀತಿಸುವನು.</verse>
				<verse number="9">ಜ್ಞಾನಿಗೆ ಉಪದೇಶಿಸಿದರೆ ಅವನು ಹೆಚ್ಚು ಜ್ಞಾನಿಯಾಗುತ್ತಾನೆ; ಸತ್ಪುರುಷನಿಗೆ ಬೋಧಿಸಿದರೆ ಅವನು ಹೆಚ್ಚು ತಿಳುವಳಿಕೆ ಪಡೆಯುತ್ತಾನೆ.</verse>
				<verse number="10">ಸರ್ವೇಶ್ವರನಲ್ಲಿನ ಭಯಭಕ್ತಿ ಜ್ಞಾನಕ್ಕೆ ಮೂಲ; ಪರಮಪಾವನನನ್ನು ಅರಿಯುವುದು ವಿವೇಕ.</verse>
				<verse number="11">ನನ್ನಿಂದ ನಿನಗೆ ಸಿಗುವುದು ದೀರ್ಘಾಯುಸ್ಸು; ವೃದ್ಧಿಯಾಗುವುದು ನಿನ್ನ ಜೀವದ ಅವಧಿ.</verse>
				<verse number="12">ನೀನು ಜ್ಞಾನವಂತನಾದರೆ ನಿನ್ನ ಜ್ಞಾನ ನಿನಗೇ ಲಾಭಕರ; ಕುಚೋದ್ಯಗಾರನು ಆದರೆ ಸವಿಯುವೆ ಅದರ ಪ್ರತೀಕಾರ.</verse>
				<verse number="13">ಅಜ್ಞಾನವೆಂಬುವಳಾದರೊ ಕೂಗಾಟಗಾರ್ತಿ, ಏನೂ ತಿಳಿಯದ ಮೂಢ ಸ್ತ್ರೀ.</verse>
				<verse number="14">ಅವಳು ತನ್ನ ಮನೆಯ ಬಾಗಿಲಲ್ಲಿ ಕುಳಿತು, ನಗರದ ಹೆದ್ದಾರಿಯ ದಿಣ್ಣೆಯ ಮೇಲೆ ನಿಂತು,</verse>
				<verse number="15">ತಮ್ಮ ತಮ್ಮ ಹಾದಿಹಿಡಿದು ಹೋಗಿ ಬರುವವರನ್ನು ಕಂಡು,</verse>
				<verse number="16">“ಮುಗ್ಧಜೀವಿಗಳು ಯಾರಾದರೂ ಇದ್ದರೆ ಬರಲಿ ಇತ್ತ” ಎಂದು ಕರೆವಳು.</verse>
				<verse number="17">“ಕದ್ದ ನೀರು ಸಿಹಿ, ಗುಟ್ಟಾಗಿ ತಿನ್ನುವ ರೊಟ್ಟಿ ರುಚಿ” ಎಂದು ಬುದ್ಧಿಹೀನನಿಗೆ ಹೇಳುವಳು.</verse>
				<verse number="18">ಅವನಿಗೆ ತಿಳಿಯದು ಅವಳ ಮನೆ ಪ್ರೇತನಿವಾಸವೆಂದು, ಅವಳ ಅತಿಥಿಗಳು ಬಿದ್ದಿರುವುದು ಅಗಾಧ ಪಾತಾಳದಲ್ಲೆಂದು.</verse>
			</chapter>
			<chapter number="10">
				<verse number="1">ಮಗನು ಜ್ಞಾನಿಯಾದರೆ ತಂದೆಗೆ ಸುಖ; ಅಜ್ಞಾನಿಯಾದರೆ ತಾಯಿಗೆ ದುಃಖ.</verse>
				<verse number="2">ಅನ್ಯಾಯದ ಸಂಪತ್ತು ನಿಷ್ಪ್ರಯೋಜಕ; ಧರ್ಮವು ಮೃತ್ಯುವಿನಿಂದ ರಕ್ಷಕ.</verse>
				<verse number="3">ಸತ್ಪುರುಷನನ್ನು ಸರ್ವೇಶ್ವರ ಹಸಿವೆಗೊಳಿಸನು; ದುಷ್ಟನ ಆಶೆಯನ್ನಾತ ಭಂಗಪಡಿಸುವನು.</verse>
				<verse number="4">ಜೋಲುಗೈ ತರುತ್ತದೆ ದಾರಿದ್ರ್ಯ; ಚುರುಕು ಕೈ ತರುತ್ತದೆ ಐಶ್ವರ್ಯ.</verse>
				<verse number="5">ಸುಗ್ಗಿಯಲ್ಲಿ ಕೂಡಿಸುವವನು ಬುದ್ಧಿವಂತ; ಕೊಯ್ಲಿನಲ್ಲಿ ತೂಕಡಿಸುವವನು ಲಜ್ಜೆಗೆಡುಕ.</verse>
				<verse number="6">ಸಜ್ಜನರ ತಲೆಯ ಮೇಲೆ ಆಶೀರ್ವಾದ; ದುರ್ಜನರ ಬಾಯಿ ಹಿಂಸಾಚಾರದ ಮುಚ್ಚಳ.</verse>
				<verse number="7">ಸಜ್ಜನರ ಸ್ಮರಣೆ ಮಂಗಳಕರ; ದುರ್ಜನರ ಹೆಸರು ಅಸಹ್ಯಕರ.</verse>
				<verse number="8">ಬುದ್ಧಿಜೀವಿಗಳು ಆಜ್ಞೆಗಳನ್ನು ಅಂಗೀಕರಿಸುವರು; ಹರಟೆಕೋರ ಹುಚ್ಚರು ನೆಲ ಕಚ್ಚುವರು.</verse>
				<verse number="9">ನಿರ್ದೋಷಿ ನಡೆಯುವನು ನಿರ್ಭಯನಾಗಿ; ವಕ್ರಮಾರ್ಗಿ ಸಿಕ್ಕಿಬಿಡುವನು ಬಟ್ಟಬಯಲಾಗಿ.</verse>
				<verse number="10">ಕಣ್ಣು ಮಿಟುಕಿಸುವವನು ತೊಂದರೆಗೆ ಕಾರಣನು; ನೆಟ್ಟಗೆ ಗದರಿಸುವವನು ಸಮಾಧಾನಕರನು.</verse>
				<verse number="11">ಸಜ್ಜನನ ಬಾಯಿ ಜೀವದ ಬುಗ್ಗೆ; ದುರ್ಜನನ ಬಾಯಿತುಂಬ ಚಿತ್ರಹಿಂಸೆ.</verse>
				<verse number="12">ಜಗಳವೆಬ್ಬಿಸುತ್ತದೆ ದ್ವೇಷ; ಪಾಪಗಳ ಮರೆಸುತ್ತದೆ ಪ್ರೇಮ.</verse>
				<verse number="13">ಬುದ್ಧಿವಂತನ ಬಾಯಿಂದ ಜ್ಞಾನ; ಬುದ್ಧಿಹೀನನ ಬೆನ್ನಿಗೆ ಬೆತ್ತ.</verse>
				<verse number="14">ಬುದ್ಧಿವಂತರು ಜ್ಞಾನದ ಭಂಡಾರಿಗಳು; ಮೂರ್ಖನ ಮಾತುಗಳು ವಿನಾಶದ ಸೋಪಾನಗಳು.</verse>
				<verse number="15">ಐಶ್ವರ್ಯವಂತನಿಗೆ ಐಶ್ವರ್ಯವೇ ಬಲವಾದ ಡೆಂಕಣ; ಬಡವನ ಅಳಿವಿಗೆ ಬಡತನವೇ ಕಾರಣ.</verse>
				<verse number="16">ಸಜ್ಜನರ ದುಡಿತ ಜೀವಾಸ್ಪದ; ದುರ್ಜನರ ಆದಾಯ ಪಾಪಾಸ್ಪದ.</verse>
				<verse number="17">ಶಿಸ್ತನ್ನು ಕೈಗೊಳ್ಳುವವನು ಜೀವಮಾರ್ಗದಲ್ಲಿರುವನು; ತಿದ್ದುಪಾಟನ್ನು ತಿರಸ್ಕರಿಸುವವನು ದಾರಿ ತಪ್ಪುವನು.</verse>
				<verse number="18">ಹೊಟ್ಟೆಯಲ್ಲಿ ಹಗೆ ಇಟ್ಟುಕೊಳ್ಳುವವನು ಸಟೆಗಾರ; ಚಾಡಿ ಹೇಳಿ ಕೇಡುಮಾಡುವುದು ಮೂರ್ಖತನ.</verse>
				<verse number="19">ವಾಚಾಳಿಗೆ ಪಾಪ ತಪ್ಪದು; ಮೌನಿಗೆ ಜ್ಞಾನ ಕೆಡದು.</verse>
				<verse number="20">ಸಜ್ಜನರ ನಾಲಿಗೆ ಚೊಕ್ಕಬೆಳ್ಳಿ; ದುರ್ಜನರ ಹೃದಯ ಹುಲ್ಲುಕಡ್ಡಿ.</verse>
				<verse number="21">ಸಜ್ಜನರ ಭಾಷಣದಿಂದ ಬಹುಜನರಿಗೆ ಪೋಷಣ; ಬುದ್ಧಿಹೀನತೆಯಿಂದ ಮೂರ್ಖರಿಗೆ ನಾಶನ.</verse>
				<verse number="22">ಸರ್ವೇಶ್ವರನ ಆಶೀರ್ವಾದ ಭಾಗ್ಯದಾಯಕ; ಅದಕ್ಕೆ ಬಾಹಿರವಾದುದು ಕಷ್ಟದುಃಖ.</verse>
				<verse number="23">ಮೂರ್ಖನಿಗೆ ಕೆಡುಕುಮಾಡುವ ಚಟ; ಬುದ್ಧಿವಂತನಿಗೆ ಜ್ಞಾನಗಳಿಸುವ ಹಟ.</verse>
				<verse number="24">ದುರ್ಜನರು ಭಯಪಡುವುದೇ ಸಂಭವಿಸುವುದು; ಸಜ್ಜನರು ಇಷ್ಟಪಡುವುದೇ ಲಭಿಸುವುದು.</verse>
				<verse number="25">ಬಿರುಗಾಳಿ ಬೀಸಿದರೆ ದುರ್ಜನರು ಇಲ್ಲವಾಗುವರು; ಸಜ್ಜನರಾದರೋ ಸದಾಕಾಲ ಸ್ಥಿರವಾಗಿ ನಿಲ್ಲುವರು.</verse>
				<verse number="26">ಹಲ್ಲಿಗೆ ಹುಳಿ ಹೇಗೋ, ಕಣ್ಣಿಗೆ ಹೊಗೆ ಹೇಗೋ; ಯಜಮಾನನಿಗೆ ಮೈಗಳ್ಳನು ಹಾಗೆ.</verse>
				<verse number="27">ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ಬಾಳುವರು ದೀರ್ಘಕಾಲ; ದುರುಳ ಜನರ ಜೀವಮಾನವೋ ಅಲ್ಪಕಾಲ.</verse>
				<verse number="28">ಸಜ್ಜನರ ನಂಬಿಕೆ ಆನಂದಕರ; ದುರ್ಜನರ ನಿರೀಕ್ಷೆ ವಿನಾಶಕರ.</verse>
				<verse number="29">ಸನ್ಮಾರ್ಗಿಗೆ ಸರ್ವೇಶ್ವರನೆ ಆಶ್ರಯ; ಕೆಡುಕನಿಗೆ ಆತನೆ ಪ್ರಳಯ.</verse>
				<verse number="30">ಸಜ್ಜನರು ಎಂದಿಗೂ ಕದಲರು; ದುರ್ಜನರು ನಾಡಿನಲ್ಲಿ ನಿಲ್ಲರು.</verse>
				<verse number="31">ಸಜ್ಜನರ ಬಾಯಲ್ಲಿ ಜ್ಞಾನ ಮೊಳೆಯುವುದು; ನೀಚನ ನಾಲಿಗೆಯೂ ಕತ್ತರಿಸಿ ಹೋಗುವುದು.</verse>
				<verse number="32">ಸಜ್ಜನರ ಬಾಯಲ್ಲಿ ಹಿತವಚನ; ದುರ್ಜನರ ಬಾಯಲ್ಲಿ ನೀಚವಚನ.</verse>
			</chapter>
			<chapter number="11">
				<verse number="1">ಕಳ್ಳತಕ್ಕಡಿ ಸರ್ವೇಶ್ವರನಿಗೆ ಅಸಹ್ಯ; ನ್ಯಾಯವಾದ ತೂಕ ಆತನಿಗೆ ಪ್ರಿಯ.</verse>
				<verse number="2">ಅಹಂಕಾರವಿದ್ದಲ್ಲಿ ಅವಮಾನ; ಸ್ವಾರ್ಥ ನಿಗ್ರಹವಿದ್ದಲ್ಲಿ ಸುಜ್ಞಾನ.</verse>
				<verse number="3">ಸಜ್ಜನರಿಗೆ ಸರಳತೆ ಮಾರ್ಗದರ್ಶನ, ದುರ್ಜನರಿಗೆ ಅವರ ವಕ್ರತೆ ಸಂಹಾರಕ.</verse>
				<verse number="4">ತೀರ್ಪಿನ ದಿನ ನೆರವಾಗದು ಆಸ್ತಿಪಾಸ್ತಿ; ಸನ್ನಡತೆಯಿಂದಲೆ ಮರಣದಿಂದ ವಿಮುಕ್ತಿ.</verse>
				<verse number="5">ನಿರ್ದೋಷಿಯ ಮಾರ್ಗ ಸರಾಗ; ದುಷ್ಟತನದಿಂದ ದುರುಳನ ಪತನ.</verse>
				<verse number="6">ಸಜ್ಜನರ ಬಿಡುಗಡೆ ಸದಾಚಾರದಿಂದ; ವಂಚಕರ ಬಂಧನ ದುರಾಶೆಯಿಂದ.</verse>
				<verse number="7">ದುರುಳನೊಂದಿಗೆ ಸಾಯುವುದು ಅವನ ನಿರೀಕ್ಷೆ; ಅಳಿವುದು ಸಾಮರ್ಥ್ಯದ ಮೇಲಿಟ್ಟ ಅವನ ನಂಬಿಕೆ.</verse>
				<verse number="8">ಸಜ್ಜನನು ಇಕ್ಕಟ್ಟಿನಿಂದ ಪಾರಾಗುವನು; ದುರ್ಜನನು ಅದರೊಳಗೆ ಸಿಕ್ಕಿಬೀಳುವನು.</verse>
				<verse number="9">ಅನೀತಿವಂತನು ಮಾತಿನಿಂದ ನೆರೆಯವನನ್ನು ನಾಶಮಾಡುವನು; ನೀತಿವಂತನು ತಿಳುವಳಿಕೆಯಿಂದ ಅವನನ್ನು ಉದ್ಧಾರಮಾಡುವನು.</verse>
				<verse number="10">ಸಜ್ಜನರು ಸುಖಿಗಳಾದರೆ ಊರಿಗೆ ಉಲ್ಲಾಸ; ದುರ್ಜನರು ಹಾಳಾದರೆ ಮಾಡುವರು ಜಯಘೋಷ.</verse>
				<verse number="11">ಸತ್ಪುರುಷರ ಆಶೀರ್ವಾದದಿಂದ ಪುರೋದ್ಧಾರ; ದುಷ್ಟಜನರ ಕೆಟ್ಟ ಬಾಯಿಂದ ಅದರ ಸಂಹಾರ.</verse>
				<verse number="12">ನೆರೆಯವನನ್ನು ತೃಣೀಕರಿಸುವವನು ಬುದ್ಧಿಹೀನ; ವಿವೇಕಿಯು ಅದರ ಬಗ್ಗೆ ತಾಳುವನು ಮೌನ.</verse>
				<verse number="13">ಚಾಡಿಕೋರನು ಗುಟ್ಟನ್ನು ರಟ್ಟುಮಾಡುವನು; ನಂಬಿಕಸ್ತನು ಅದನ್ನು ಮುಚ್ಚಿ ಮರೆಮಾಡುವನು.</verse>
				<verse number="14">ನಾಯಕನಿಲ್ಲದ ಜನತೆ ನಾಶವಾಗುವುದು; ಹಲವರು ಸುಮಂತ್ರಿಗಳಿರುವಲ್ಲಿ ಸಂರಕ್ಷಣೆ ಇರುವುದು.</verse>
				<verse number="15">ಅಪರಿಚಿತನಿಗೆ ಜಾಮೀನು ನಿಂತರೆ ಹಾನಿ; ಜಾಮೀನನ್ನು ತೊರೆದುಬಿಟ್ಟರೆ ನೆಮ್ಮದಿ.</verse>
				<verse number="16">ಸದ್ಗುಣಸ್ತ್ರೀ ಕಾಪಾಡಿಕೊಳ್ಳುತ್ತಾಳೆ ಸನ್ಮಾನವನ್ನು; ಬಲವಂತವ್ಯಕ್ತಿ ಕಾಪಾಡಿಕೊಳ್ಳುತ್ತಾನೆ ಆಸ್ತಿಪಾಸ್ತಿಯನ್ನು.</verse>
				<verse number="17">ಪರೋಪಕಾರಿ ತನಗೂ ಉಪಕಾರಿ; ಕ್ರೂರಿಯಾದವನು ತನ್ನ ದೇಹಕ್ಕೂ ಕ್ರೂರಿ.</verse>
				<verse number="18">ದುರುಳನು ಪಡೆವ ಸಂಬಳ ಜೊಳ್ಳು ಸಂಬಳ; ನೀತಿಯನ್ನು ಬಿತ್ತುವವನು ಪಡೆವನು ಸತ್ಫಲ.</verse>
				<verse number="19">ಧರ್ಮನಿರತನಿಗೆ ದೊರಕುವುದು ಜೀವ; ಅಧರ್ಮಾಸಕ್ತನಿಗೆ ಸಿಗುವುದು ಮರಣ.</verse>
				<verse number="20">ವಕ್ರಹೃದಯರು ಸರ್ವೇಶ್ವರನಿಗೆ ಅಸಹ್ಯರು; ಸನ್ಮಾರ್ಗಿಗಳು ಆತನ ಕೃಪೆಗೆ ಪಾತ್ರರು.</verse>
				<verse number="21">ದುಷ್ಟನಿಗೆ ದಂಡನೆ ಕಟ್ಟಿಟ್ಟ ಬುತ್ತಿ; ಶಿಷ್ಟ ಸಂತಾನಕ್ಕೆ ಸಿಗುವುದು ಮುಕ್ತಿ.</verse>
				<verse number="22">ಲಜ್ಜೆಗೆಟ್ಟು ನಡೆಯುವ ಸೌಂದರ್ಯವತಿ; ಹಂದಿಯ ಮೂತಿಗೆ ಚಿನ್ನದ ಮೂಗುತಿ.</verse>
				<verse number="23">ಸಜ್ಜನರ ಕೋರಿಕೆ ಕಲ್ಯಾಣ ಸಾಧಕ; ದುರ್ಜನರ ನಿರೀಕ್ಷೆ ಕೋಪಾಗ್ನಿ ಸಾಧಕ.</verse>
				<verse number="24">ಅಳತೆಯಿಲ್ಲದೆ ಕೊಡುವವನು ಧನಾಢ್ಯನಾಗುವನು; ಕೊಡಬೇಕಾದುದನ್ನೂ ಬಿಗಿಹಿಡಿದವನು ಬಡವನಾಗುವನು.</verse>
				<verse number="25">ದಾನ ಗುಣವುಳ್ಳವನು ಧನವಂತನಾಗುವನು; ನೀರು ಹಾಯಿಸುವವನಿಗೆ ನೀರು ದೊರಕುವುದು.</verse>
				<verse number="26">ಧಾನ್ಯವನ್ನು ಕೊಡದೆ ತುಂಬಿಟ್ಟುಕೊಳ್ಳುವವನ ಮೇಲೆ ಜನರ ಶಾಪ; ಧಾನ್ಯವನ್ನು ಮಾರುವವನ ತಲೆಯ ಮೇಲೆ ಆಶೀರ್ವಾದ.</verse>
				<verse number="27">ಒಳಿತಿಗಾಗಿ ಹಂಬಲಿಸುವವನು ಕೃಪಾರ್ಥಿ; ಕೇಡನ್ನು ಹುಡುಕುವವನಿಗೆ ಕೇಡೇ ಗತಿ.</verse>
				<verse number="28">ದ್ರವ್ಯವನ್ನು ನಂಬಿದವನು ಉದುರಿಹೋಗುವನು; ದೈವಭಕ್ತನು ಕುಡಿಯಂತೆ ಚಿಗುರುವನು.</verse>
				<verse number="29">ಮನೆಯವರನ್ನೆ ಬಾಧಿಸುವವನು ಗಳಿಸುವುದು ಗಾಳಿ; ಬಿದ್ದಿರುವನವನು ಜ್ಞಾನಿಗೆ ಊಳಿಗನಾಗಿ.</verse>
				<verse number="30">ಸಜ್ಜನರು ಈವುದು ಜೀವಫಲ; ದುರ್ಜನರು ಪಡೆವುದು ಅಕಾಲಮರಣ.</verse>
				<verse number="31">ಸಜ್ಜನರೇ ಜಗದೊಳು ತಮ್ಮ ಕರ್ಮದ ಫಲವನ್ನು ಅನುಭವಿಸುವಲ್ಲಿ; ಹೇಳಬೇಕೆ ಇನ್ನು ದುರ್ಜನರ, ಹಾಗೂ ಪಾಪಿಗಳ ಪರಿಸ್ಥಿತಿ?</verse>
			</chapter>
			<chapter number="12">
				<verse number="1">ಶಿಸ್ತನ್ನು ಹಾರೈಸುವವನು ಶಿಕ್ಷಣ ಪ್ರಿಯನು; ತಿದ್ದುವಿಕೆಯನ್ನು ಹಗೆಮಾಡುವವನು ಪಶುಪ್ರಾಯನು.</verse>
				<verse number="2">ಒಳ್ಳೆಯವನು ಸರ್ವೇಶ್ವರನ ದಯೆಯನ್ನು ಗಳಿಸುವನು; ಕೆಟ್ಟವನ ಕುಯುಕ್ತಿ ದೈವಖಂಡನೆಯನ್ನು ಪಡೆಯುವುದು.</verse>
				<verse number="3">ದುಷ್ಟತನದಿಂದ ಯಾವನೂ ಸ್ಥಿರತೆಯನ್ನು ಗಳಿಸಿಲ್ಲ; ಶಿಷ್ಟನ ಬೇರನ್ನು ಯಾರೂ ಕದಲಿಸುವಂತಿಲ್ಲ.</verse>
				<verse number="4">ಗುಣವಂತ ಸತಿ ಗಂಡನ ತಲೆಗೆ ಕಿರೀಟ; ಲಜ್ಜೆಗೆಟ್ಟ ಹೆಂಡತಿ ಆತನ ಎಲುಬಿಗೆ ಕ್ಷಯ.</verse>
				<verse number="5">ಸತ್ಪುರುಷನ ಉದ್ದೇಶ ನ್ಯಾಯಯುತ; ದುಷ್ಟರ ಆಲೋಚನೆ ಮೋಸಭರಿತ.</verse>
				<verse number="6">ದುರುಳರ ಮಾತು ಜೀವಕ್ಕೆ ಉರುಳು; ಸಜ್ಜನರ ಮಾತು ಪ್ರಾಣಕ್ಕೆ ನೆರವು.</verse>
				<verse number="7">ದುರ್ಜನರು ನೆಲಕ್ಕುರುಳಿ ನಿರ್ಮೂಲರಾಗುವರು; ಸಜ್ಜನರ ತಲೆಮಾರು ಸ್ಥಿರವಾಗಿ ನಿಲ್ಲುವುದು.</verse>
				<verse number="8">ಬುದ್ಧಿವಂತನನ್ನು ಅವರ ಬುದ್ಧಿಗೆ ತಕ್ಕಂತೆ ಜನ ಹೊಗಳುವರು; ವಕ್ರಬುದ್ಧಿಯುಳ್ಳವನನ್ನಾದರೊ ಅವರು ತೆಗಳುವರು.</verse>
				<verse number="9">ಹೊಟ್ಟೆಗಿಲ್ಲದೆ ಜಟ್ಟಿಯೆನಿಸಿಕೊಳ್ಳುವವನಿಗಿಂತ ಕಷ್ಟದಿಂದ ದುಡಿವ ಸಾಧಾರಣ ಬಂಟನೆ ಲೇಸು.</verse>
				<verse number="10">ಒಳ್ಳೆಯವನು ದನಕರುಗಳಿಗೂ ದಯೆ ತೋರುವನು; ಕೆಟ್ಟವನು ತೋರುವ ಕರುಣೆಯು ಕ್ರೂರತನವಾಗುವುದು.</verse>
				<verse number="11">ಉತ್ತು ವ್ಯವಸಾಯ ಮಾಡುವವನು ಹೊಟ್ಟೆತುಂಬ ಉಣ್ಣುವನು; ವ್ಯರ್ಥಕಾರ್ಯಗಳಲ್ಲಿ ಆಸಕ್ತಿಯುಳ್ಳವನು ಮತಿಹೀನನು.</verse>
				<verse number="12">ಕೆಡುಕರ ಕೋಟೆ ಪುಡಿಪುಡಿಯಾಗುವುದು; ಒಳ್ಳೆಯವರ ಬುಡ ಫಲಬಿಡುವುದು.</verse>
				<verse number="13">ಮಾತಿನ ದೋಷದಿಂದ ಕೆಡುಕನು ಬೋನಿಗೆ ಬೀಳುವನು; ನೀತಿವಂತನು ಆಪತ್ತಿನಿಂದ ತಪ್ಪಿಸಿಕೊಳ್ಳುವನು.</verse>
				<verse number="14">ಮಾತುಬಲ್ಲವನು ಬದುಕುವನು ಸಂತುಷ್ಟನಾಗಿ; ಕೈಯಿರುವವನು ಬಾಳುವನು ಬಹು ಮಾನಿತನಾಗಿ.</verse>
				<verse number="15">ಮೂರ್ಖನ ನಡತೆ ಸ್ವಂತ ಮೆಚ್ಚುಗೆಗೆ; ಬುದ್ಧಿವಂತ ಕಿವಿಗೊಡುವನು ಉಚಿತಾಲೋಚನೆಗೆ.</verse>
				<verse number="16">ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು; ಜಾಣನು ನಿಂದೆಯನ್ನು ಮರೆಮಾಚುವನು.</verse>
				<verse number="17">ಸತ್ಯವಾದಿ ಪ್ರಾಮಾಣಿಕ ಸಾಕ್ಷಿ; ಸುಳ್ಳು ಸಾಕ್ಷಿ ಕಪಟ ವಾಚಾಳಿ.</verse>
				<verse number="18">ಕತ್ತಿ ಇರಿತದಂತೆ ದುಡುಕನ ಮಾತು; ಹುಣ್ಣಿಗೆ ಮದ್ದುಹಾಕಿದಂತೆ ಜ್ಞಾನಿಗಳ ಮಾತು.</verse>
				<verse number="19">ಸತ್ಯವಾದಿಯ ಮಾತು ಶಾಶ್ವತ; ಮಿಥ್ಯವಾದಿಯ ಮಾತು ಕ್ಷಣಿಕ.</verse>
				<verse number="20">ಕೇಡನ್ನು ಕಲ್ಪಿಸುವವರ ಮನದಲ್ಲಿ ಮೋಸ; ಒಳಿತನ್ನು ಬಯಸುವವರ ಮನದಲ್ಲಿ ಉಲ್ಲಾಸ.</verse>
				<verse number="21">ಸಜ್ಜನರಿಗೆ ಸಂಭವಿಸದು ಯಾವ ಕೆಡುಕು; ದುರ್ಜನರಿಗೆ ತುಂಬಿತುಳುಕುವುದು ಕೇಡು.</verse>
				<verse number="22">ಮಿಥ್ಯವಾದಿಗಳು ಸರ್ವೇಶ್ವರನಿಗೆ ಹೇಸು; ಸತ್ಯವಾದಿಗಳು ಆತನಿಗೆ ಲೇಸು.</verse>
				<verse number="23">ಜಾಣನು ತನ್ನ ಜ್ಞಾನವನ್ನು ಮುಚ್ಚಿಡುವನು; ಮೂಢನು ತನ್ನ ಮೂರ್ಖತನವನ್ನು ಪ್ರಕಟಿಸುವನು.</verse>
				<verse number="24">ಚೂಟಿಯಾದವನು ಆಳುವನು ಯಜಮಾನನಾಗಿ; ಮೈಗಳ್ಳನು ಬಾಳುವನು ಗುಲಾಮನಾಗಿ.</verse>
				<verse number="25">ಚಿಂತೆ ಮನಸ್ಸನ್ನು ಕುಗ್ಗಿಸುತ್ತದೆ; ಸವಿಮಾತು ಅದನ್ನು ಹಿಗ್ಗಿಸುತ್ತದೆ.</verse>
				<verse number="26">ನೀತಿವಂತ ನೆರೆಯವನಿಗೆ ದಾರಿತೋರಿಸುವನು; ಅನೀತಿವಂತನು ಅವನಿಗೆ ದಾರಿ ತಪ್ಪಿಸುವನು.</verse>
				<verse number="27">ಮೈಗಳ್ಳನು ಬೇಟೆಯಾಡಿದ್ದನ್ನೂ ಬೇಯಿಸನು; ಚೂಟಿಯಾದವನ ಪಾಲಿಗೆ ಬರುವುದು ಸಂಪತ್ತು.</verse>
				<verse number="28">ಸನ್ಮಾರ್ಗದಿಂದ ಜೀವಲಾಭ; ದುರ್ಮಾರ್ಗದಿಂದ ಮರಣ ಪ್ರಾಪ್ತಿ.</verse>
			</chapter>
			<chapter number="13">
				<verse number="1">ಬುದ್ಧಿವಂತ ಮಗ ತಂದೆಯ ಶಿಕ್ಷಣವನ್ನು ಕೇಳುವನು; ಕಿತ್ತಾಡುವ ಮಗ ಗದರಿಕೆಯನ್ನೂ ಕೇಳಲೊಲ್ಲನು.</verse>
				<verse number="2">ಸಜ್ಜನರ ಊಟ ಫಲಹಾರ; ವಂಚಕರ ಆಹಾರ ಹಿಂಸಾಚಾರ.</verse>
				<verse number="3">ಬಾಯಿಯನ್ನು ಕಾಯುವವನು ಜೀವವನ್ನು ಕಾಯುವನು; ತುಟಿಗಳನ್ನು ಹತೋಟಿಯಲ್ಲಿಡದವನು ನಾಶವಾಗುವನು.</verse>
				<verse number="4">ಸೋಮಾರಿಗೆ ಹಸಿದಿದ್ದರೂ ಊಟವಿಲ್ಲ; ಶ್ರಮಜೀವಿಗಳಿಗಾದರೋ ಬಲಿಷ್ಠರನ್ನಾಗಿಸುವ ಮೃಷ್ಟಾನ್ನ.</verse>
				<verse number="5">ಸಜ್ಜನನಿಗೆ ಮೋಸಮಾತು ಅಸಹ್ಯ; ದುರ್ಜನನ ನಡತೆ ನಿಂದಾಸ್ಪದ.</verse>
				<verse number="6">ನೀತಿ ಕಾಪಾಡುವುದು ನಿರ್ದೋಷಿಯನ್ನು; ಅನೀತಿ ಕೆಡವಿಬಿಡುವುದು ಪಾಪಿಯನ್ನು.</verse>
				<verse number="7">ಒಬ್ಬ ಹಣಕೂಡಿಸಿದ್ದರೂ ಘನದರಿದ್ರನಿರಬಹುದು; ಮತ್ತೊಬ್ಬ ಹಣವೆಚ್ಚಮಾಡಿ ಕಡುಬಡವನಾಗಿದ್ದರೂ ಐಶ್ವರ್ಯವಂತನಾಗಿರಬಹುದು.</verse>
				<verse number="8">ಹಣವಂತನ ಪ್ರಾಣರಕ್ಷಣೆಗೆ ಅವನ ಹಣವೇ ಈಡು; ಬಡವನಿಗೆ ಈಡಿನ ಬೆದರಿಕೆಯೂ ಇರದು.</verse>
				<verse number="9">ಸಜ್ಜನರ ಬೆಳಕು ಪ್ರಜ್ವಲಿಸುವುದು; ದುರ್ಜನರ ದೀಪವು ಆರಿಹೋಗುವುದು.</verse>
				<verse number="10">ಗರ್ವದಿಂದ ಹುಟ್ಟುವುದು ಕಲಹಕದನ; ಆಲೋಚನೆಯನ್ನು ಕೇಳುವುದು ಸುಜ್ಞಾನ.</verse>
				<verse number="11">ಬಿಟ್ಟಿಯಾಗಿ ಸಿಕ್ಕಿದ ಸಂಪತ್ತು ಬೇಗನೆ ಕರಗುವುದು; ದುಡಿದು ಕೂಡಿಸಿದ ಹಣ ಅಭಿವೃದ್ಧಿಯಾಗುವುದು.</verse>
				<verse number="12">ಕೋರಿದ್ದು ತಡವಾದರೆ ಮನಸ್ಸಿಗೆ ತುಡಿತ; ಕೈಗೂಡಿದ ಇಷ್ಟಾರ್ಥ ಜೀವವೃಕ್ಷ.</verse>
				<verse number="13">ದೇವವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಯನ್ನು ನಿಷ್ಠೆಯಿಂದ ಪಾಲಿಸುವವನು ಫಲಪಡೆಯುವನು.</verse>
				<verse number="14">ಜ್ಞಾನಿಯ ಬೋಧೆ ಜೀವದ ಬುಗ್ಗೆ; ಮಾಡುವುದದು ಮರಣದಿಂದ ಬಿಡುಗಡೆ.</verse>
				<verse number="15">ಸುಬುದ್ಧಿ ದಯಾಸ್ಪದ; ದುರಾಚಾರ ವಿನಾಶಕರ.</verse>
				<verse number="16">ಜಾಣನು ತಿಳುವಳಿಕೆಯಿಂದ ವರ್ತಿಸುತ್ತಾನೆ; ಮೂಢನು ಮೂರ್ಖತನವನ್ನು ತೋರ್ಪಡಿಸುತ್ತಾನೆ.</verse>
				<verse number="17">ಕೆಟ್ಟದೂತನು ಕೇಡಿಗೆ ಸಿಕ್ಕಿಸುವನು; ನಂಬಿಕಸ್ಥ ದೂತನು ಸುಕ್ಷೇಮಕಾರನು.</verse>
				<verse number="18">ಶಿಕ್ಷೆಯನ್ನು ಉಪೇಕ್ಷಿಸುವವನಿಗೆ ಕಾದಿದೆ ಬಡತನ ಹಾಗು ಅವಮಾನ; ಗದರಿಕೆಯನ್ನು ಗಮನಿಸುವವ ಹೊಂದುವನು ಸನ್ಮಾನ.</verse>
				<verse number="19">ಇಷ್ಟಸಿದ್ಧಿ ಮನಸ್ಸಿಗೆ ಸಿಹಿ; ಕೆಟ್ಟದ್ದನ್ನು ಬಿಡುವುದು ಮೂಢರಿಗೆ ಕಹಿ.</verse>
				<verse number="20">ಸುಜ್ಞಾನಿಗಳ ಸಹವಾಸದಿಂದ ಜನರು ಸುಜ್ಞಾನಿಗಳಾಗುವರು; ಅಜ್ಞಾನಿಗಳ ಒಡನಾಟದಿಂದ ಸಂಕಟಪಡುವರು.</verse>
				<verse number="21">ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು; ಮಂಗಳವು ಸತ್ಪುರುಷರಿಗೆ ಸಿಗುವ ಪ್ರತಿಫಲವು.</verse>
				<verse number="22">ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯದ ಸೊತ್ತು; ಪಾಪಿಯ ಸೊತ್ತು ಸತ್ಪುರುಷರಿಗೆ ಸೇರುವ ಸಂಪತ್ತು.</verse>
				<verse number="23">ಬಡವರಿಗೆ ಬಂಜರುಭೂಮಿಯೂ ಬೆಳೆಯನ್ನೀಯುವುದುಂಟು; ಭಂಡತನ ಇರುವಲ್ಲಿ ಅದು ಕೂಡ ಹಾಳಾಗುವುದುಂಟು.</verse>
				<verse number="24">ಬೆತ್ತಹಿಡಿಯದ ತಂದೆ ಮಗನಿಗೆ ಶತ್ರು; ಎಚ್ಚರಿಕೆಯಿಂದ ಶಿಕ್ಷಿಸುವ ತಂದೆ ಮಗನಿಗೆ ಮಿತ್ರನು.</verse>
				<verse number="25">ನೀತಿವಂತನು ಹೊಟ್ಟೆತುಂಬ ಉಣ್ಣುವನು; ದುಷ್ಟನ ಹೊಟ್ಟೆ ಹಸಿವಿನಿಂದ ಬಳಲುವುದು.</verse>
			</chapter>
			<chapter number="14">
				<verse number="1">ಬುದ್ಧಿವಂತೆ ತನ್ನ ಮನೆಯನ್ನು ಕಟ್ಟೆಬ್ಬಿಸುತ್ತಾಳೆ; ಬುದ್ಧಿಹೀನೆ ಅದನ್ನು ಕೈಯಿಂದ ಕೆಡವಿಹಾಕುತ್ತಾಳೆ.</verse>
				<verse number="2">ಸನ್ಮಾರ್ಗಿಯು ಸರ್ವೇಶ್ವರನಿಗೆ ಭಯಪಡುತ್ತಾನೆ; ದುರ್ಮಾರ್ಗಿಯು ಆತನನ್ನು ಅಸಡ್ಡೆಮಾಡುತ್ತಾನೆ.</verse>
				<verse number="3">ಮೂರ್ಖನ ಬಾಯಲ್ಲಿ ಗರ್ವವು ಅಂಕುರಿಸುವುದು; ಜ್ಞಾನಿಗಳ ವಚನಗಳು ಅವರನ್ನು ಕಾಪಾಡುವುವು.</verse>
				<verse number="4">ಎತ್ತುಗಳಿಲ್ಲದಿರುವಾಗ ಗೋದಲಿ ಶುದ್ಧ; ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ಉತ್ಪನ್ನ.</verse>
				<verse number="5">ಸತ್ಯಸಾಕ್ಷಿ ಸುಳ್ಳಾಡದ ವ್ಯಕ್ತಿ; ಸುಳ್ಳು ಸಾಕ್ಷಿ ಅಬದ್ಧಪ್ರಿಯ ವ್ಯಕ್ತಿ.</verse>
				<verse number="6">ಕುಚೋದ್ಯನಿಗೆ ಜ್ಞಾನ ಹುಡುಕಿದರೂ ಸಿಕ್ಕದು; ವಿವೇಕಿಗೆ ತಿಳುವಳಿಕೆ ಸುಲಭವಾಗಿ ದಕ್ಕುವುದು.</verse>
				<verse number="7">ಮೂರ್ಖನಿಂದ ದೂರವಿರು; ಜ್ಞಾನವಚನ ಅವನಲ್ಲಿ ಕಾಣಸಿಗದು.</verse>
				<verse number="8">ವಿವೇಕಿಯ ಜ್ಞಾನ ಸನ್ಮಾರ್ಗದಲ್ಲಿ ನಡೆಸುತ್ತದೆ; ಮೂಢರ ಮೂರ್ಖತನ ಮೋಸಗೊಳಿಸುತ್ತದೆ.</verse>
				<verse number="9">ಪಾಪಪರಿಹಾರವನ್ನು ಪರಿಹಾಸ್ಯಮಾಡುತ್ತಾರೆ ಮೂರ್ಖರು; ಪಾಪಕ್ಷಮೆಯನ್ನು ಕೋರುತ್ತಾರೆ ಸತ್ಪುರುಷರು.</verse>
				<verse number="10">ಆಯಾಯ ಹೃದಯಕ್ಕೆ ಗೊತ್ತು ಅದರ ಗೋಳು; ಅದರ ಸಂತೋಷದಲ್ಲೂ ಪಾಲುಗೊಳ್ಳಲಾಗದು ಬೇರೆಯವರು.</verse>
				<verse number="11">ದುಷ್ಟರ ಮನೆಮಠ ನಿರ್ಮೂಲವಾಗುವುದು; ಸಜ್ಜನರ ಗುಡಾರ ಉದ್ಧಾರವಾಗುವುದು.</verse>
				<verse number="12">ಒಂದು ಮಾರ್ಗ ಒಬ್ಬನಿಗೆ ನೇರವೆಂದು ತೋರಬಹುದು; ಕೊನೆಗೆ ಅದು ಮರಣಕ್ಕೊಯ್ಯುವ ಹಾದಿಯಾಗಬಹುದು.</verse>
				<verse number="13">ನಗೆಯಲ್ಲೂ ಅಳು ಉಂಟು; ನಲಿವು ನೋವಾಗಿ ಕೊನೆಗೊಳ್ಳುವುದುಂಟು.</verse>
				<verse number="14">ಕೆಟ್ಟವನು ತನ್ನ ಕರ್ಮದ ಕಹಿಫಲದಿಂದ ತಿಂದು ತೇಗುವನು; ಒಳ್ಳೆಯವನು ತನ್ನ ಕಾರ್ಯದ ಸತ್ಫಲದಿಂದ ತೃಪ್ತನಾಗುವನು.</verse>
				<verse number="15">ಪೆದ್ದನು ಕಿವಿಗೆ ಬಿದ್ದುದೆಲ್ಲವನ್ನು ನಂಬಿಬಿಡುವನು; ಜಾಣನು ವಿವೇಚನೆ ಮಾಡಿ ಹೆಜ್ಜೆ ಇಡುವನು.</verse>
				<verse number="16">ಬುದ್ಧಿವಂತನು ಕೇಡಿಗೆ ಅಂಜಿ ಓರೆಯಾಗುವನು; ಬುದ್ಧಿಹೀನನು ಸೊಕ್ಕಿನಿಂದ ಅದರತ್ತ ಧಾವಿಸುವನು.</verse>
				<verse number="17">ಮುಂಗೋಪಿಗೆ ಬುದ್ಧಿಮಟ್ಟುಂಟು; ವಿವೇಕಿಗಾದರೊ ಸಹನೆಯುಂಟು.</verse>
				<verse number="18">ದಡ್ಡರ ಸೊತ್ತು ಮೂಢತನ; ಜಾಣರಿಗೆ ಜ್ಞಾನವೆ ಭೂಷಣ.</verse>
				<verse number="19">ಕೆಟ್ಟವರು ಒಳ್ಳೆಯವರಿಗೆ ಬಾಗಬೇಕಾಗುವುದು; ದುಷ್ಟರು ಸಜ್ಜನರ ಬಾಗಿಲಿಗೆ ಅಡ್ಡಬೀಳಬೇಕಾಗುವುದು.</verse>
				<verse number="20">ಬಡವನನ್ನು ನೆರೆಯವರೂ ತುಚ್ಛವಾಗಿ ಕಾಣುವರು; ಹಣವಂತನಿಗಾದರೊ ಬಹುಜನ ಮಿತ್ರರು.</verse>
				<verse number="21">ಹಸಿದವನನ್ನು ತಿರಸ್ಕರಿಸುವವನು ಪಾಪಿಷ್ಠನು; ದಲಿತರಿಗೆ ದಯೆ ತೋರಿಸುವವನು ಭಾಗ್ಯವಂತನು.</verse>
				<verse number="22">ಕೆಟ್ಟದ್ದನ್ನು ಕಲ್ಪಿಸುವವರು ಮಾರ್ಗಭ್ರಷ್ಟರು; ಒಳ್ಳೆಯದನ್ನು ಕಲ್ಪಿಸುವವರು ಮರ್ಯಾದಸ್ಥರು.</verse>
				<verse number="23">ದುಡಿಮೆಯಿಂದ ಸದಾ ಲಾಭವುಂಟು; ಬರಿ ಮಾತಿನಿಂದ ಬಡತನ ಬರುವುದುಂಟು.</verse>
				<verse number="24">ಬುದ್ಧಿವಂತರ ಕಿರೀಟ ಅವರ ಜ್ಞಾನವೇ; ದಡ್ಡರ ಶಿರಮುಕುಟ ಅವರ ದಡ್ಡತನವೆ.</verse>
				<verse number="25">ಸತ್ಯವಾಡುವವನ ಸಾಕ್ಷಿ ಪ್ರಾಣಕ್ಕೆ ರಕ್ಷಣೆ; ಸುಳ್ಳಾಡುವವನ ಮಾತು ಬರೀ ವಂಚನೆ.</verse>
				<verse number="26">ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಿಗೆ ಇದೆ ದೃಢಭರವಸೆ; ಆತನ ಮಕ್ಕಳಿಗೆ ಆಶ್ರಯ ಇದ್ದೇ ಇರುತ್ತದೆ.</verse>
				<verse number="27">ಸರ್ವೇಶ್ವರನಲ್ಲಿ ಭಯಭಕ್ತಿಯು ಜೀವಜಲದ ಚಿಲುಮೆಯು; ಮರಣಪಾಶದಿಂದ ತಪ್ಪಿಸಿಕೊಳ್ಳಲು ಅದುವೆ ಸಾಧನವು.</verse>
				<verse number="28">ಪ್ರಜೆಗಳ ಬಹುಸಂಖ್ಯೆ ಅರಸನಿಗೆ ಅತಿ ಹಿರಿಮೆ; ಪ್ರಜೆಗಳ ಕೊರತೆ ರಾಜಕುವರನಿಗೂ ಅಂಜಿಕೆ.</verse>
				<verse number="29">ದೀರ್ಘಶಾಂತನು ಬಹು ಬುದ್ಧಿವಂತನು; ಉಗ್ರಕೋಪಿ ಎತ್ತಿಹಿಡಿವನು ಮೂರ್ಖತನವನ್ನು.</verse>
				<verse number="30">ಶಾಂತಗುಣವು ದೇಹಕ್ಕೆ ಆರೋಗ್ಯದಾಯಕವು; ಹೊಟ್ಟೆಕಿಚ್ಚು ಎಲುಬಿಗೆ ಕ್ಷಯ ರೋಗವು.</verse>
				<verse number="31">ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ನಿರ್ಗತಿಕನಿಗೆ ದಯೆತೋರಿಸುವವನು ಆತನನ್ನು ಘನಪಡಿಸುತ್ತಾನೆ.</verse>
				<verse number="32">ಆಪತ್ಕಾಲ ಬಂದಾಗ ದುಷ್ಟನು ಹಾಳಾಗುತ್ತಾನೆ; ಮರಣವೇಳೆಯಲ್ಲೂ ನೀತಿವಂತ ನಂಬಿಕೆಯಿಂದಿರುತ್ತಾನೆ.</verse>
				<verse number="33">ಬುದ್ಧಿವಂತರ ಹೃದಯ ಜ್ಞಾನದ ಆಶ್ರಯ; ಬುದ್ಧಿಹೀನರ ಹೃದಯ ಜ್ಞಾನದ ಶೂನ್ಯ.</verse>
				<verse number="34">ಸದಾಚಾರದಿಂದ ನಾಡಿನ ಉನ್ನತಿ; ಅನಾಚಾರದಿಂದ ಅದರ ಅವನತಿ.</verse>
				<verse number="35">ಜಾಣನಾದ ಸೇವಕನ ಮೇಲೆ ರಾಜನ ಕೃಪೆಯಿರುತ್ತದೆ; ಲಜ್ಜಾಸ್ಪದ ಸೇವಕನ ಮೇಲೆ ಅವನ ಕೋಪ ಎರಗುತ್ತದೆ.</verse>
			</chapter>
			<chapter number="15">
				<verse number="1">ಮೃದುವಾದ ಮಾತು ಸಿಟ್ಟನ್ನಾರಿಸುತ್ತದೆ; ಬಿರುಸಾದ ನುಡಿ ಸಿಟ್ಟನ್ನೇರಿಸುತ್ತದೆ.</verse>
				<verse number="2">ಜ್ಞಾನಿಗಳ ನಾಲಿಗೆ ತಿಳುವಳಿಕೆಯನ್ನು ಸಾರ್ಥಕಪಡಿಸುತ್ತದೆ; ಜ್ಞಾನಹೀನರ ಬಾಯಿ ಮೂರ್ಖತನವನ್ನು ಕಕ್ಕುತ್ತದೆ.</verse>
				<verse number="3">ಸರ್ವೇಶ್ವರನ ದೃಷ್ಟಿ ಸರ್ವವ್ಯಾಪ್ತ; ಕೆಟ್ಟವರ ಮೇಲೂ ಒಳ್ಳೆಯವರ ಮೇಲೂ ಆತನ ನೋಟ.</verse>
				<verse number="4">ಸಂತೈಸುವ ನಾಲಿಗೆ ಜೀವವೃಕ್ಷಕ್ಕೆ ಸಮಾನ; ಹಿಂಸಾತ್ಮಕ ನಾಲಿಗೆ ಮನಮುರಿತಕ್ಕೆ ಸಾಧನ.</verse>
				<verse number="5">ಮೂರ್ಖನು ತಂದೆಯ ಶಿಕ್ಷಣವನ್ನು ನಿರ್ಲಕ್ಷ್ಯ ಮಾಡುತ್ತಾನೆ; ಜಾಣನು ಆತನ ಗದರಿಕೆಯನ್ನೂ ಗಮನಿಸುತ್ತಾನೆ.</verse>
				<verse number="6">ನೀತಿವಂತನ ಮನೆಯೊಳು ನಿಧಿನಿಕ್ಷೇಪ; ಅನೀತಿವಂತನ ಆದಾಯ ದುಃಖತಾಪ.</verse>
				<verse number="7">ತಿಳುವಳಿಕೆಯ ಬಿತ್ತನೆ ಜ್ಞಾನಿಗಳ ಬಾಯಿಂದ; ದುರುಳರ ಹೃದಯಕ್ಕೆ ಅದು ಅಸಾಧ್ಯ.</verse>
				<verse number="8">ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.</verse>
				<verse number="9">ದುರುಳರ ನಡತೆ ಸರ್ವೇಶ್ವರನಿಗೆ ಹೇಯ; ನೀತಿವಂತರ ನಡತೆ ಆತನಿಗೆ ಸುಪ್ರಿಯ.</verse>
				<verse number="10">ಸನ್ಮಾರ್ಗವನ್ನು ತೊರೆದವನಿಗೆ ಬರುವ ಶಿಕ್ಷೆ ಕಠಿಣ ಬುದ್ಧಿವಾದವನ್ನು ಕೇಳಲೊಲ್ಲದವನಿಗೆ ಬರುವುದು ಮರಣ.</verse>
				<verse number="11">ಸರ್ವೇಶ್ವರನ ಕಣ್ಣಿಗೆ ನರಕಪಾತಾಳಗಳೇ ಬಟ್ಟಬಯಲಾಗಿರಲು; ನರಮಾನವರ ಹೃದಯ ಆತನಿಗೆ ಮುಚ್ಚುಮರೆಯೇ?</verse>
				<verse number="12">ಕುಚೋದ್ಯನಿಗೆ ಬೇಡ ಬುದ್ಧಿವಾದ; ಅವನಿಗೆ ಬೇಡ ಜ್ಞಾನಿಗಳ ಸತ್ಸಂಘ.</verse>
				<verse number="13">ಹರ್ಷಹೃದಯದಿಂದ ಮುಖ ಅರಳುವುದು; ಮನೋವ್ಯಥೆಯಿಂದ ಚೈತನ್ಯ ಕುಂದುವುದು.</verse>
				<verse number="14">ವಿವೇಕಿಯ ಮನ ತಿಳುವಳಿಕೆಯನ್ನು ಅರಸುವುದು; ಮತಿಹೀನನ ಬಾಯಿ ಮೂರ್ಖತನವನ್ನು ಮುಕ್ಕುವುದು.</verse>
				<verse number="15">ದಲಿತರ ದಿನಗಳೆಲ್ಲ ದುಃಖಭರಿತ; ಹರ್ಷ ಹೃದಯನಿಗೆ ಸದಾ ಹಬ್ಬದಾನಂದ.</verse>
				<verse number="16">ನೆಮ್ಮದಿಯಿಲ್ಲದ ಸಿರಿಸಂಪತ್ತಿಗಿಂತಲು, ಸರ್ವೇಶ್ವರನ ಭಯಭಕ್ತಿಯಿಂದ ಕೂಡಿದ ಕಿಂಚಿತ್ತೇ ಮೇಲು.</verse>
				<verse number="17">ದ್ವೇಷವಿರುವಲ್ಲಿ ಕೊಬ್ಬಿದ ಮಾಂಸಭೋಜನಕ್ಕಿಂತ, ಪ್ರೀತಿಯಿರುವಲ್ಲಿ ಸೊಪ್ಪಿನ ಊಟವೇ ಲೇಸು.</verse>
				<verse number="18">ಉಗ್ರಕೋಪಿ ವ್ಯಾಜ್ಯವೆಬ್ಬಿಸುತ್ತಾನೆ; ದೀರ್ಘಶಾಂತನು ಜಗಳ ತೀರಿಸುತ್ತಾನೆ.</verse>
				<verse number="19">ಸೋಮಾರಿಯ ದಾರಿ ಮುಳ್ಳಿನ ಬೇಲಿ; ಸಜ್ಜನರ ಮಾರ್ಗ ರಾಜಬೀದಿ.</verse>
				<verse number="20">ಬುದ್ಧಿವಂತ ಮಗ ತಂದೆಯನ್ನು ಸಂತೋಷಗೊಳಿಸುತ್ತಾನೆ; ಬುದ್ಧಿಹೀನನು ಹೆತ್ತ ತಾಯಿಯನ್ನು ತಿರಸ್ಕರಿಸುತ್ತಾನೆ.</verse>
				<verse number="21">ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುತ್ತಾನೆ; ಬುದ್ಧಿವಂತನು ಸನ್ಮಾರ್ಗದಲ್ಲಿ ಮುಂದುವರಿಯುತ್ತಾನೆ.</verse>
				<verse number="22">ಆಲೋಚನೆಯಿಲ್ಲದೆ ಉದ್ದೇಶಗಳು ಈಡೇರವು; ಹಲವಾರು ಆಲೋಚನಾಪರರಿರುವಲ್ಲಿ ಅವು ಕೈಗೂಡುವುವು.</verse>
				<verse number="23">ಸದುತ್ತರ ಕೊಡುವವನಿಗೆ ಎಷ್ಟೋ ಸಂತೋಷ; ಸಮಯೋಚಿತ ವಚನ ಎಷ್ಟೋ ಸ್ವಾರಸ್ಯ.</verse>
				<verse number="24">ವಿವೇಕಿಗಳ ಮಾರ್ಗ ಏರಿಸುವುದು ಸಜ್ಜೀವಕ್ಕೆ; ಅದನ್ನು ಕೈಗೊಳ್ಳುವವರು ಇಳಿಯರು ಪಾತಾಳಕ್ಕೆ.</verse>
				<verse number="25">ಗರ್ವಿಷ್ಠನ ಮನೆಯನ್ನು ಸರ್ವೇಶ್ವರ ಕೆಡವಿಬಿಡುವನು; ವಿಧವೆಯ ಎಲ್ಲೆ ಮೇರೆಯನ್ನು ಸುಭದ್ರಪಡಿಸುವನು.</verse>
				<verse number="26">ದುರುಳರ ಕುಯುಕ್ತಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರ ಸುಸೂಕ್ತಿ ಆತನಿಗೆ ಪ್ರಿಯ.</verse>
				<verse number="27">ಸೂರೆಮಾಡುವವನು ಸ್ವಂತ ಮನೆಗೇ ಕೇಡುಮಾಡುತ್ತಾನೆ; ಲಂಚವನ್ನು ದ್ವೇಷಿಸುವವನು ಸುಖವಾಗಿ ಬಾಳುತ್ತಾನೆ.</verse>
				<verse number="28">ಸಜ್ಜನರು ಸಮಾಲೋಚಿಸಿ ಉತ್ತರಿಸುತ್ತಾರೆ; ದುರ್ಜನರು ಕೆಟ್ಟದ್ದನ್ನು ಕಕ್ಕುತ್ತಿರುತ್ತಾರೆ.</verse>
				<verse number="29">ಸರ್ವೇಶ್ವರನು ದುರುಳರಿಗೆ ದೂರ; ನೀತಿವಂತರ ಪ್ರಾರ್ಥನೆಗೆ ಹತ್ತಿರ.</verse>
				<verse number="30">ಹಸನ್ಮುಖ ಕಂಡಾಗ ಹೃದಯಕ್ಕೆ ಆನಂದ; ಶುಭಸಮಾಚಾರದಿಂದ ದೇಹಕ್ಕೆ ಉತ್ತೇಜನ.</verse>
				<verse number="31">ಹಿತಕರ ಬುದ್ಧಿವಾದಕ್ಕೆ ಕಿವಿಗೊಡುವವನು ಸಜ್ಜನರ ಸತ್ಸಂಘದಲ್ಲಿ ಪಾಲ್ಗೊಳ್ಳುವನು.</verse>
				<verse number="32">ಶಿಸ್ತನ್ನು ನಿರಾಕರಿಸುವವನು ತನ್ನನ್ನೇ ತೃಣೀಕರಿಸುತ್ತಾನೆ; ಬುದ್ಧಿವಾದವನ್ನು ಅಂಗೀಕರಿಸುವವನು ಜ್ಞಾನ ಹೊಂದುತ್ತಾನೆ.</verse>
				<verse number="33">ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಿಗೆ ಜ್ಞಾನೋದಯ; ಘನತೆಗೌರವಕ್ಕೆ ಮುಂಚೆ ಸವಿನಯ.</verse>
			</chapter>
			<chapter number="16">
				<verse number="1">ಆಲೋಚನೆ ಮಾಡುವುದು ಮನುಷ್ಯನ ಇಚ್ಛೆ; ಅದನ್ನು ಸಫಲವಾಗಿಸುವುದು ಸರ್ವೇಶ್ವರನ ಇಚ್ಛೆ.</verse>
				<verse number="2">ಮನುಷ್ಯನ ನಡತೆಯೆಲ್ಲಾ ಸ್ವಂತ ದೃಷ್ಟಿಗೆ ಶುದ್ಧ; ಆದರೆ ಅವನ ಅಂತರಂಗವನ್ನು ವೀಕ್ಷಿಸುವಂಥವನು ಸರ್ವೇಶ್ವರ.</verse>
				<verse number="3">ನಿನ್ನ ಕಾರ್ಯಭಾರವನ್ನು ಸರ್ವೇಶ್ವರನಿಗೆ ವಹಿಸು; ಆಗ ಸಫಲವಾಗುವುದು ನಿನ್ನ ಯೋಜನೆಯು.</verse>
				<verse number="4">ಸರ್ವೇಶ್ವರ ಒಂದೊಂದನ್ನೂ ಸೃಷ್ಟಿಸಿರುವುದು ಒಂದು ಗುರಿಯಿಟ್ಟೇ ಹೌದು; ಕೆಡುಕರನ್ನು ಉಂಟುಮಾಡಿರುವುದು ಕೇಡಿನ ದಿನಕ್ಕಾಗಿಯೇ.</verse>
				<verse number="5">ಗರ್ವಿಷ್ಠನು ಯಾರೇ ಆಗಿರಲಿ, ಅವನು ಸರ್ವೇಶ್ವರನಿಗೆ ಅಸಹ್ಯ; ಅವನಿಗೆ ದಂಡನೆ ತಪ್ಪದು, ಇದು ಖಂಡಿತ.</verse>
				<verse number="6">ಪ್ರೀತಿ ಸತ್ಯತೆಗಳಿಂದ ಪಾಪನಿವಾರಣೆ; ಸರ್ವೇಶ್ವರನ ಭಯಭಕ್ತಿಯಿಂದ ಹಾನಿ ನಿವಾರಣೆ.</verse>
				<verse number="7">ಒಬ್ಬನ ನಡತೆಯನ್ನುಸರ್ವೇಶ್ವರ ಮೆಚ್ಚಿದರೆ, ಅವನ ಶತ್ರುಗಳನ್ನು ಆತ ಮಿತ್ರರನ್ನಾಗಿಸುತ್ತಾನೆ.</verse>
				<verse number="8">ಅನ್ಯಾಯದಿಂದ ಗಳಿಸಿದ ಅಪಾರ ನಿಧಿಗಿಂತಲು ನ್ಯಾಯದಿಂದ ಕೂಡಿಸಿದ ಅಲ್ಪ ಧನ ಲೇಸು.</verse>
				<verse number="9">ಮನುಷ್ಯ ಮನಬಂದಂತೆ ಮಾರ್ಗವನ್ನಾರಿಸಿಕೊಂಡರೂ ಸರ್ವೇಶ್ವರನೇ ಅವನ ನಡತೆಯನ್ನು ಪರಾಂಬರಿಸುವವನು.</verse>
				<verse number="10">ದೈವೋಕ್ತಿ ಹೊರಡುವುದು ಅರಸನ ಬಾಯಿಂದ; ತಪ್ಪುಮಾಡದು ಅವನ ಬಾಯಿ ತೀರ್ಪು ನೀಡುವಾಗ.</verse>
				<verse number="11">ನ್ಯಾಯದ ತ್ರಾಸುತಕ್ಕಡಿಗಳೆಲ್ಲ ಸರ್ವೇಶ್ವರನ ಏರ್ಪಾಡು; ಚೀಲದ ಕಲ್ಲುತೂಕಗಳೆಲ್ಲ ಆತನ ಕೈಕೆಲಸ.</verse>
				<verse number="12">ರಾಜರಲ್ಲಿ ದುಷ್ಟಕಾರ್ಯ ಖಂಡನೀಯ; ಸದಾಚಾರ ಸಿಂಹಾಸನಕ್ಕೆ ನಿಜ ಆಧಾರ.</verse>
				<verse number="13">ನೀತಿಯುತ ಮಾತನ್ನು ಅರಸನು ಮೆಚ್ಚುವನು; ಸತ್ಯವಾದಿಯನ್ನು ಆತನು ಪ್ರೀತಿಸುವನು.</verse>
				<verse number="14">ಭೂಪನ ಕೋಪ ಮೃತ್ಯುವಿನ ದೂತ; ಅದನ್ನು ಶಮನಪಡಿಸಲು ಜಾಣನು ಶಕ್ತ.</verse>
				<verse number="15">ಪ್ರಭುವಿನ ಮುಖಪ್ರಸನ್ನತೆ ಜೀವದ ಒರತೆ; ಆತನ ಕರುಣೆ ಮುಂಗಾರು ಮಳೆ.</verse>
				<verse number="16">ಬಂಗಾರಕ್ಕಿಂತ ಜ್ಞಾನಾರ್ಜನೆ ಎಷ್ಟೋ ಮೇಲು; ಬೆಳ್ಳಿಗಿಂತ ವಿವೇಕಾರ್ಜನೆ ಎಷ್ಟೋ ಲೇಸು.</verse>
				<verse number="17">ಸಜ್ಜನರ ರಾಜಮಾರ್ಗ ಹಾನಿಗೆ ದೂರ; ಸನ್ನಡತೆಯುಳ್ಳವ ಪ್ರಾಣಸಂರಕ್ಷಕ.</verse>
				<verse number="18">ವಿನಾಶಕ್ಕೆ ಮುಂಚೆ ವಿಪರೀತ ಬುದ್ಧಿ; ನೆಲಕ್ಕುರುಳುವುದಕ್ಕೆ ಮುಂಚೆ ನೆತ್ತಿಗೇರಿತು ಸೊಕ್ಕು.</verse>
				<verse number="19">ಸೊಕ್ಕಿನವರ ಸಂಗಡ ಸೂರೆಹಂಚಿಕೊಳ್ಳುವುದಕ್ಕಿಂತಲು ದೀನದಲಿತರ ಸಂಗಡ ದೈನ್ಯದಿಂದಿರುವುದು ಮೇಲು.</verse>
				<verse number="20">ದೇವರ ವಾಕ್ಯ ಸ್ಮರಿಸುವವನು ಸುಕ್ಷೇಮದಿಂದ ಬಾಳುವನು; ಸರ್ವೇಶ್ವರನಲ್ಲಿ ಭರವಸೆ ಇಡುವವನು ಭಾಗ್ಯವಂತನು.</verse>
				<verse number="21">ಜ್ಞಾನ ಹೃದಯರಿಗೆ ಜಾಣರೆಂಬ ಬಿರುದು; ಮಧುರ ಮಾತಿನಿಂದ ಬೋಧನಾಶಕ್ತಿ ಹಿರಿದು.</verse>
				<verse number="22">ವಿವೇಕಿಗೆ ವಿವೇಕವೇ ಜೀವದ ಬುಗ್ಗೆ; ಮೂರ್ಖನಿಗೆ ಮೂರ್ಖತನವೇ ತಕ್ಕ ದಂಡನೆ.</verse>
				<verse number="23">ಜ್ಞಾನಿಯ ಹೃದಯದಿಂದ ಬಾಯಿಗೆ ಜಾಣತನ; ಅವನ ತುಟಿಗಳಿಗೆ ಕಲಿಕೆಯ ಚೂಟಿತನ.</verse>
				<verse number="24">ಸವಿನುಡಿಯು ಜೇನಿನ ಕೊಡವು; ಅದು ಆತ್ಮಕ್ಕೆ ಇಂಪು, ದೇಹಕ್ಕೆ ತಂಪು.</verse>
				<verse number="25">ಒಂದು ಮಾರ್ಗ ಒಬ್ಬನಿಗೆ ನೇರವೆಂದು ತೋರಬಹುದು; ಕೊನೆಗೆ ಅದು ಮರಣಕ್ಕೆ ಒಯ್ಯುವ ಹಾದಿಯಾಗಬಹುದು.</verse>
				<verse number="26">ದುಡಿಯುವವನು ಹೊಟ್ಟೆಪಾಡಿಗಾಗಿ ದುಡಿಯುತ್ತಾನೆ; ಹೊಟ್ಟೆಕಾಟವೆ ಸಾಕು ಅವನನ್ನು ದುಡಿಸಲಿಕ್ಕೆ.</verse>
				<verse number="27">ನೀಚನು ಕೇಡೆಂಬ ಗುಳಿಯನ್ನು ತೋಡುತ್ತಾನೆ; ಸುಡುವ ಬೆಂಕಿಯ ಜ್ಞಾಲೆ ಅವನ ನಾಲಿಗೆ.</verse>
				<verse number="28">ತುಂಟನು ಜಗಳವನ್ನು ಹುಟ್ಟಿಸುತ್ತಾನೆ; ಚಾಡಿಕೋರನು ಮಿತ್ರರನ್ನು ಬೇರ್ಪಡಿಸುತ್ತಾನೆ.</verse>
				<verse number="29">ಹಿಂಸಾತ್ಮಕನು ನೆರೆಯವನನ್ನು ಮರುಳುಗೊಳಿಸುತ್ತಾನೆ; ಅವನನ್ನು ದುರ್ಮಾರ್ಗಕ್ಕೆ ಎಳೆಯುತ್ತಾನೆ.</verse>
				<verse number="30">ಕಣ್ಣುಮಿಟುಕಿಸುವವನು ಕುಯುಕ್ತಿಯನ್ನು ಕಲ್ಪಿಸುತ್ತಾನೆ; ತುಟಿಕಚ್ಚುವವನು ಕೇಡನ್ನು ಸಾಧಿಸುತ್ತಾನೆ.</verse>
				<verse number="31">ನರೆಗೂದಲು ಸುಂದರ ಕಿರೀಟ, ಸನ್ನಡತೆಗೆ ಸಿಗುವ ಪ್ರತಿಫಲ.</verse>
				<verse number="32">ದೀರ್ಘಶಾಂತನು ಪರಾಕ್ರಮಶಾಲಿಗಿಂತ ಶ್ರೇಷ್ಠ; ತನ್ನನ್ನು ತಾನೆ ಗೆದ್ದವನು ಪಟ್ಟಣ ಗೆದ್ದವನಿಗಿಂತ ಬಲಿಷ್ಠ.</verse>
				<verse number="33">ಅದೃಷ್ಟದ ಚೀಟನ್ನು ಕುಲುಕಿ ಮಡಲಿಗೆ ಹಾಕಬಹುದು; ಆದರೆ ತೀರ್ಪು ಸರ್ವೇಶ್ವರನ ಕೈಯಲ್ಲಿರುವುದು.</verse>
			</chapter>
			<chapter number="17">
				<verse number="1">ಜಗಳ ತುಂಬಿದ ಮನೆಯಲ್ಲಿ ಹಬ್ಬದೂಟ ಮಾಡುವುದಕ್ಕಿಂತಲು ಶಾಂತಿ ಸಮಾಧಾನದಿಂದ ಕೂಡಿದ ಒಣ ತುತ್ತೇ ಲೇಸು.</verse>
				<verse number="2">ಜಾಣನಾದ ಆಳು ಮಾನಕಳೆದ ಮನೆಮಗನ ಮೇಲೆ ಅಧಿಕಾರ ನಡೆಸುವನು, ಮನೆಮಕ್ಕಳ ಬಾಧ್ಯತೆಯಲ್ಲೂ ಪಾಲುಗಾರನಾಗುವನು.</verse>
				<verse number="3">ಪುಟಕುಲುಮೆಗಳು ಬೆಳ್ಳಿಬಂಗಾರಗಳನ್ನು ಶೋಧಿಸುತ್ತವೆ; ಸರ್ವೇಶ್ವರನು ಹೃದಯಗಳನ್ನು ಶೋಧಿಸುತ್ತಾನೆ.</verse>
				<verse number="4">ಕೆಡುಕನು ಕೆಟ್ಟತುಟಿ ಆಡುವುದನ್ನು ಗಮನಿಸುತ್ತಾನೆ; ಸುಳ್ಳುಗಾರ ನಷ್ಟಮಾಡುವ ನಾಲಿಗೆಗೆ ಕಿವಿಗೊಡುತ್ತಾನೆ.</verse>
				<verse number="5">ಬಡವರನ್ನು ಗೇಲಿಮಾಡುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ಪರರ ಕಷ್ಟದುಃಖಗಳನ್ನು ನೋಡಿ ಹಿಗ್ಗುವವನು ದಂಡನೆಗೆ ಗುರಿಯಾಗುತ್ತಾನೆ.</verse>
				<verse number="6">ಮಕ್ಕಳ ಮಕ್ಕಳು ಮುದುಕರ ಮುಕುಟ; ಮಕ್ಕಳಿಗೆ ಹೆತ್ತವರೇ ಭೂಷಣ.</verse>
				<verse number="7">ಉತ್ತಮವಾದ ಮಾತು ಮೂರ್ಖನಿಗೆ ಹಿಡಿಸದು; ಸುಳ್ಳುಮಾತು ಉತ್ತಮನಿಗೆ ಮತ್ತೂ ಹಿಡಿಸದು.</verse>
				<verse number="8">ಕೊಡುವವನ ಕಣ್ಣಿಗೆ ಲಂಚವು ಚಿಂತಾಮಣಿಯಂತೆ; ಎತ್ತ ತಿರುಗಿದರತ್ತ ಅದರಿಂದ ಜಯವಂತೆ!</verse>
				<verse number="9">ತಪ್ಪನ್ನು ಮನ್ನಿಸುವವನು ಪ್ರೀತಿಯನ್ನು ಅರಸುತ್ತಾನೆ; ತಪ್ಪನ್ನು ಎತ್ತಿ ಆಡುವವನು ಆಪ್ತನನ್ನೂ ಕಳೆದುಕೊಳ್ಳುತ್ತಾನೆ.</verse>
				<verse number="10">ಮಂದಮತಿಗೆ ನೂರು ಗುದ್ದು; ಬುದ್ಧಿವಂತನಿಗೆ ಒಂದು ಮಾತು.</verse>
				<verse number="11">ದುರಾತ್ಮನ ಕಣ್ಣೆಲ್ಲಾ ದಂಗೆ ಏಳುವುದರ ಮೇಲೆ; ಕ್ರೂರದೂತನು ಎರಗಿ ಬರುವನು ಅವನ ಮೇಲೆ.</verse>
				<verse number="12">ಮೂರ್ಖತನದಲ್ಲಿ ಮುಳುಗಿರುವ ಮೂಢನಿಗೆ ಎದುರಾಗುವುದಕ್ಕಿಂತಲು ಮರಿಗಳನ್ನು ಕಳೆದುಕೊಂಡ ಕರಡಿಗೆ ಎದುರಾಗುವುದು ಲೇಸು.</verse>
				<verse number="13">ಯಾರು ಉಪಕಾರಕ್ಕೆ ಅಪಕಾರ ಮಾಡುತ್ತಾರೊ ಅಂಥವರ ಮನೆಯಿಂದ ಕೇಡು ತೊಲಗದು.</verse>
				<verse number="14">ವಾಗ್ವಾದವು ಏರಿಗೆ ಬಿರುಕು ಬಿದ್ದಂತೆ; ಸಿಟ್ಟೇರುವುದಕ್ಕೆ ಮುಂಚೆ ಜಗಳವನ್ನು ತೊರೆದುಬಿಡು.</verse>
				<verse number="15">ದುರ್ಜನರನ್ನು ಸಜ್ಜನರೆಂದೂ, ಸಜ್ಜನರನ್ನು ದುರ್ಜನರೆಂದೂ ನಿರ್ಣಯಿಸುವ ಇಬ್ಬರೂ ಸರ್ವೇಶ್ವರನಿಗೆ ಅಸಹ್ಯರು.</verse>
				<verse number="16">ಜ್ಞಾನವನ್ನು ಕೊಳ್ಳಲು ಮೂಢನ ಕೈಯಲ್ಲಿ ಹಣವೇಕೆ? ಇದನ್ನು ಕೊಳ್ಳಲು ಬೇಕಾದ ಬುದ್ಧಿಯೇ ಅವನಿಗಿಲ್ಲವಲ್ಲಾ!</verse>
				<verse number="17">ಮಿತ್ರನ ಪ್ರೀತಿ ನಿರಂತರ; ಕಷ್ಟಕ್ಕಾದವನೆ ಹುಟ್ಟುನಂಟ.</verse>
				<verse number="18">ಬೇರೆಯವನ ಸಾಲಕ್ಕಾಗಿ ಕೈ ಮೇಲೆ ಕೈಹಾಕಿ ಹೊಣೆಯಾಗಿ ನಿಂತವನು ಬುದ್ಧಿಹೀನನೆ ಸರಿ.</verse>
				<verse number="19">ಕಲಹಪ್ರಿಯನು ಪಾಪಪ್ರಿಯನು; ಕದವನ್ನು ಎತ್ತರಿಸಿದವನು ಕೇಡನ್ನು ಬರಮಾಡಿಕೊಳ್ಳುವನು.</verse>
				<verse number="20">ವಕ್ರಮನಸ್ಸುಳ್ಳವನು ಒಳಿತನ್ನು ಕಾಣನು; ಕೆಟ್ಟ ನಾಲಿಗೆಯವನು ಸಂಕಟಕ್ಕೆ ಸಿಕ್ಕಿಕೊಳ್ಳುವನು.</verse>
				<verse number="21">ಹೆಡ್ಡನನ್ನು ಹೆತ್ತವನಿಗೆ ವ್ಯಥೆ; ಮೂರ್ಖನ ತಂದೆಗೆ ಕಡುಚಿಂತೆ.</verse>
				<verse number="22">ಹರ್ಷ ಹೃದಯ ಒಳ್ಳೆಯ ಔಷಧ; ಕುಗ್ಗಿದ ಮನದಿಂದ ಅಸ್ಥಿಪಂಜರ.</verse>
				<verse number="23">ಲಂಚವನ್ನು ಗುಟ್ಟಾಗಿ ಪಡೆದ ದುಷ್ಟನು ಡೊಂಕಾಗಿಸುತ್ತಾನೆ ನ್ಯಾಯ ನಿರ್ಣಯವನ್ನು.</verse>
				<verse number="24">ವಿವೇಕಿಗೆ ಜ್ಞಾನವೇ ಗುರಿ ಧ್ಯೇಯ; ಮೂಢನ ದೃಷ್ಟಿ ದಿಗಂತದಷ್ಟು ವಿಶಾಲ.</verse>
				<verse number="25">ಬುದ್ಧಿಹೀನನಾದ ಮಗನು ತಂದೆಗೆ ಕಿರಿಕಿರಿ; ಹೆತ್ತತಾಯಿಗೆ ಅವನು ಕರಕರೆ.</verse>
				<verse number="26">ನೀತಿವಂತನಿಗೆ ದಂಡ ಸರಿಯಲ್ಲ; ಸಜ್ಜನನಿಗೆ ಶಿಕ್ಷೆ ನ್ಯಾಯವಲ್ಲ.</verse>
				<verse number="27">ಹಿಡಿದು ಮಾತಾಡುವವನು ಜ್ಞಾನಿ; ಶಾಂತ ಗುಣವುಳ್ಳವನು ವಿವೇಕಿ.</verse>
				<verse number="28">ಮೂಢನು ಕೂಡ ಮೌನತಾಳಿದರೆ ಜ್ಞಾನಿಯೆನಿಸಿಕೊಳ್ಳುವನು; ತುಟಿಗಳನ್ನು ಬಿಗಿಹಿಡಿದರೆ ವಿವೇಕಿ ಎನಿಸಿಕೊಳ್ಳುವನು.</verse>
			</chapter>
			<chapter number="18">
				<verse number="1">ಬೇರೆಯವರೊಡನೆ ಸೇರದವನು ಸ್ವೇಚ್ಛಾನುಸಾರ ನಡೆಯುವನು; ಇತರರು ಸುಜ್ಞಾನವೆನ್ನುವುದನ್ನೇ ವಿರೋಧಿಸುವನು.</verse>
				<verse number="2">ಮತಿಗೆಟ್ಟವನಿಗೆ ವಿವೇಕವು ಅನಿಷ್ಟ; ಸ್ವಾರ್ಥವನ್ನು ಪ್ರಕಟಿಸುವುದೆಂದರೆ ಅವನಿಗೆ ಬಲು ಇಷ್ಟ.</verse>
				<verse number="3">ದುರಾಚಾರವಿದ್ದಲ್ಲಿ ತಾತ್ಸಾರ; ಮಾನ ಕಳೆದುಕೊಂಡಲ್ಲಿ ಧಿಕ್ಕಾರ.</verse>
				<verse number="4">ಸತ್ಪುರುಷನ ನುಡಿ ಜಲನಿಧಿ; ಜ್ಞಾನದ ಬುಗ್ಗೆ ಹರಿಯುವ ತೊರೆ.</verse>
				<verse number="5">ದುಷ್ಟನಿಗೆ ಪಕ್ಷಪಾತ ತೋರುವುದು ಸಲ್ಲ; ಸಜ್ಜನನಿಗೆ ನ್ಯಾಯ ತಪ್ಪಿಸುವುದು ಸರಿಯಲ್ಲ.</verse>
				<verse number="6">ಕಲಹವೆಬ್ಬಿಸುವುದು ಬುದ್ಧಿಹೀನನ ತುಟಿ; ಪೆಟ್ಟಿಗಾಗಿ ಕೂಗಿಕೊಳ್ಳುವುದು ಅವನ ಬಾಯಿ.</verse>
				<verse number="7">ಬುದ್ಧಿಹೀನನಿಗೆ ಬಾಯೇ ನಾಶ, ತುಟಿಗಳೇ ಅವನಿಗೆ ಪಾಶ.</verse>
				<verse number="8">ಚಾಡಿಕೋರನ ಮಾತುಗಳು ರುಚಿಕರವಾದ ತುತ್ತುಗಳು; ಅವು ಅಡಿಹೊಟ್ಟೆಗೆ ಇಳಿಯುವ ಕವಳಗಳು.</verse>
				<verse number="9">ಸೋಮಾರಿಯಾದ ಕೆಲಸಗಳ್ಳನು, ಕೆಡುಕನಿಗೆ ರಕ್ತಸಂಬಂಧಿಕನು.</verse>
				<verse number="10">ಸರ್ವೇಶ್ವರನ ನಾಮ ಬಲವಾದ ಗೋಪುರ; ಅದರೊಳಗೆ ಓಡಿ ಆಶ್ರಯ ಪಡೆದರೆ ಸುಭದ್ರ.</verse>
				<verse number="11">ಐಶ್ವರ್ಯವಂತನಿಗೆ ಹಣವೆ ಬಲವಾದ ಕೋಟೆ; ಅದುವೇ ಎತ್ತರವಾದ ಪೌಳಿಗೋಡೆ.</verse>
				<verse number="12">ಭಂಗಕ್ಕೆ ಮುಂಚೆ ಗರ್ವದ ಗುಂಡಿಗೆ; ಗೌರವಕ್ಕೆ ಮೊದಲು ನಮ್ರತೆ.</verse>
				<verse number="13">ಕೇಳಿಸಿಕೊಳ್ಳದೆ ಉತ್ತರಕೊಡುವವನು ಹುಚ್ಚ; ನಿಂದೆ ಅವಮಾನಕ್ಕೆ ಅವನು ಯೋಗ್ಯ.</verse>
				<verse number="14">ಆತ್ಮವು ವ್ಯಾಧಿಯನ್ನು ಸಹಿಸಬಲ್ಲದು; ಆತ್ಮವೇ ನೊಂದರೆ ಸಹಿಸುವವರಾರು?</verse>
				<verse number="15">ಬುದ್ಧಿವಂತನ ಮನಸ್ಸು ತಿಳುವಳಿಕೆಯನ್ನು ಗಳಿಸುತ್ತದೆ; ಜ್ಞಾನಿಯ ಕಿವಿಯು ತಿಳುವಳಿಕೆಯನ್ನು ಹುಡುಕುತ್ತದೆ.</verse>
				<verse number="16">ಕಾಣಿಕೆ ತರುವವನಿಗೆ ಬಾಗಿಲು ತೆರೆಯುತ್ತದೆ; ಶ್ರೀಮಂತನ ಸಾನ್ನಿಧ್ಯಕ್ಕೂ ಅದು ನಡೆಸುತ್ತದೆ.</verse>
				<verse number="17">ಮೊದಲು ವಾದಿಸುವವನು ನ್ಯಾಯವಾದಿಯೆಂದೇ ತೋರುವನು; ಅವನ ಬಂಡವಾಳ ಗೊತ್ತಾಗುವುದು ಪ್ರತಿವಾದಿ ಎದ್ದ ಮೇಲೆ.</verse>
				<verse number="18">ಚೀಟುಹಾಕುವುದರಿಂದ ವ್ಯಾಜ್ಯಗಳ ಶಮನ; ಜಟ್ಟಿಗಳ ನಡುವೆ ಕಾಳಗದ ವಿರಾಮ.</verse>
				<verse number="19">ಸಹಾಯ ಹೊಂದಿದ ಸೋದರ ದುರ್ಗಕ್ಕಿಂತಲು ದುಸ್ತರ; ಅವನೊಡನೆ ಜಗಳ ಕೋಟೆ ಮನೆಗೆ ಹಾಕಿದ ಅಗುಳಿ.</verse>
				<verse number="20">ಬಾಯಿ ಬಿತ್ತಿದ ಬೆಳೆಯಿಂದ ಮನುಷ್ಯ ಹೊಟ್ಟೆ ತುಂಬುವನು; ತುಟಿಗಳು ಕೊಟ್ಟ ಫಲದಿಂದ ತಿಂದು ತೇಗುವನು.</verse>
				<verse number="21">ಜನನ ಮರಣಗಳ ಶಕ್ತಿ ನಾಲಿಗೆಗಿದೆ; ವಚನ ಪ್ರಿಯರು ಅದರ ಫಲವನ್ನು ರುಚಿಸುವರು.</verse>
				<verse number="22">ಮಡದಿಯನ್ನು ಪಡೆಯುವುದು ಪುಣ್ಯಪಡೆದ ಹಾಗೆ, ಅದು ಸರ್ವೇಶ್ವರನ ಅನುಗ್ರಹಪಡೆದ ಹಾಗೆ.</verse>
				<verse number="23">ಬಡವರು ಮಾಡುವ ಬಿನ್ನಹ ನಮ್ರ; ಬಲ್ಲಿದರು ಕೊಡುವ ಬದಲು ಉಗ್ರ.</verse>
				<verse number="24">ಗೆಳೆಯರಂತೆ ನಟಿಸಿ ನಾಶಗೊಳಿಸುವವರು ಅನೇಕರುಂಟು; ಸಹೋದರನಿಗಿಂತ ಪ್ರಿಯನಾದ ಸ್ನೇಹಿತನೂ ಉಂಟು.</verse>
			</chapter>
			<chapter number="19">
				<verse number="1">ಕಪಟವಾಗಿ ಮಾತಾಡುವ ಮೂಢನಿಗಿಂತ ನಿರ್ದೋಷಿಯಾಗಿ ನಡೆವ ಬಡವನೇ ಲೇಸು.</verse>
				<verse number="2">ಅರಿವಿಲ್ಲದ ಹುರುಪು ಸರಿಯಲ್ಲ; ದುಡುಕುವ ಕಾಲು ದಾರಿತಪ್ಪುವುದು ದಿಟ.</verse>
				<verse number="3">ಮನುಷ್ಯನ ಬಾಳಿನ ಅಳಿವು ತನ್ನ ಮೂರ್ಖತನದಿಂದ; ಆದರೂ ಅವನು ಸಿಡಿದೇಳುವುದು ಸರ್ವೇಶ್ವರನ ವಿರುದ್ಧ.</verse>
				<verse number="4">ಧನವಂತನಿಗೆ ಸ್ನೇಹಿತರು ಬಹುಮಂದಿ; ಬಡವನಿಗಿದ್ದ ಗೆಳೆಯನೂ ಪರಾರಿ.</verse>
				<verse number="5">ಕಳ್ಳಸಾಕ್ಷಿ ದಂಡನೆಯನ್ನು ಪಡೆಯದಿರನು; ಸುಳ್ಳಾಡುವವನು ಅದನ್ನು ತಪ್ಪಿಸಿಕೊಳ್ಳಲಾರನು.</verse>
				<verse number="6">ಉದಾರಿಯ ಕೃಪೆಕೋರುವವರು ಅನೇಕರು; ದಾನಶೂರನಿಗೆ ಎಲ್ಲರು ಸ್ನೇಹಿತರು.</verse>
				<verse number="7">ಬಡವನನ್ನು ಬಂಧುಗಳೆಲ್ಲರು ಹಗೆಮಾಡುವರು; ಮಿತ್ರರೋ ಖರೆಯಾಗಿ ಅವನಿಗೆ ದೂರವಾಗುವರು; ಹಿಂಬಾಲಿಸಿ ಬರುವವರು ಅವನ ಬಾಯಿಮಾತನ್ನು ನಂಬರು.</verse>
				<verse number="8">ಬುದ್ಧಿಯನ್ನು ಗಳಿಸುವವನು ತನಗೆ ತಾನೇ ಗೆಳೆಯನು; ವಿವೇಕವನ್ನು ಕಾಪಾಡುವವನು ಪಡೆಯುವನು ಏಳಿಗೆಯನ್ನು.</verse>
				<verse number="9">ಕಳ್ಳಸಾಕ್ಷಿ ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ಹಾಳಾಗಿ ಹೋಗುವನು.</verse>
				<verse number="10">ಭೋಗಜೀವನ ಬುದ್ಧಿಹೀನನಿಗೆ ಯೋಗ್ಯವಲ್ಲ; ದೊರೆಗಳ ಮೇಲೆ ದೊರೆತನ ದಾಸನಿಗೆ ತಕ್ಕುದಲ್ಲ.</verse>
				<verse number="11">ವಿವೇಕಿಯು ಸಿಟ್ಟುಗೊಳ್ಳಲು ತಡಮಾಡುತ್ತಾನೆ; ತಪ್ಪನ್ನು ಕ್ಷಮಿಸುವುದೆಂದರೆ ಅವನಿಗೆ ಹೆಮ್ಮೆ.</verse>
				<verse number="12">ರಾಜನ ರೋಷ ಸಿಂಹದ ಗರ್ಜನೆಯು; ಅವನ ದಯೆ ಹುಲ್ಲಿನ ಮೇಲಣ ಇಬ್ಬನಿಯು.</verse>
				<verse number="13">ಬುದ್ಧಿಹೀನನಾದ ಮಗ ತಂದೆಗೆ ತರುತ್ತಾನೆ ಹಾನಿ; ಜಗಳವಾಡುವ ಹೆಂಡತಿ ತಟತಟನೆ ತೊಟ್ಟಿಕ್ಕುವ ಹನಿ.</verse>
				<verse number="14">ಮನೆಮಾರು, ಆಸ್ತಿಪಾಸ್ತಿ ಬರುತ್ತವೆ ಪಿತ್ರಾರ್ಜಿತವಾಗಿ; ವಿವೇಕಿಯಾದ ಹೆಂಡತಿ ಸಿಕ್ಕುವುದು ಸರ್ವೇಶ್ವರನ ಅನುಗ್ರಹವಾಗಿ.</verse>
				<verse number="15">ಮೈಗಳ್ಳತನ ಗಾಢನಿದ್ರೆಯಲ್ಲಿ ಮುಳುಗಿಸುವುದು; ಸೋಮಾರಿಯು ಹಸಿವಿನಿಂದ ಬಳಲುವನು.</verse>
				<verse number="16">ದೈವಾಜ್ಞೆಯನ್ನು ಪಾಲಿಸುವವನು ತನ್ನನ್ನೇ ಕಾಪಾಡಿಕೊಳ್ಳುವನು; ದೈವವಾರ್ತೆಯ ಬಗ್ಗೆ ಅಜಾಗ್ರತನಾಗಿರುವವನು ಸಾಯುವನು.</verse>
				<verse number="17">ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.</verse>
				<verse number="18">ತಿದ್ದಿಕೊಳ್ಳುವನೆಂಬ ನಂಬಿಕೆಯಿರುವಾಗಲೆ ಮಗನನ್ನು ಶಿಕ್ಷಿಸು; ಇಲ್ಲವಾದರೆ ಅವನ ಅಳಿವಿಗೆ ನೀನೇ ಕಾರಣವಾಗುವೆ.</verse>
				<verse number="19">ಕಡುಕೋಪಿ ದಂಡನೆಯನ್ನು ಅನುಭವಿಸಲಿ ಬಿಡು; ಒಮ್ಮೆ ಬಿಡಿಸಿದರೆ, ಬಾರಿಬಾರಿಗೂ ಬಿಡಿಸಬೇಕಾಗುವುದು.</verse>
				<verse number="20">ಬುದ್ಧಿವಾದವನ್ನು ಕೇಳು, ತಿದ್ದುಪಾಟನ್ನು ಅಂಗೀಕರಿಸು; ಹಾಗೆ ಮಾಡಿದರೆ ಮುಂದಕ್ಕೆ ಜ್ಞಾನಿಯಾಗಿ ಬಾಳುವೆ.</verse>
				<verse number="21">ಮನುಜನ ಮನದಲ್ಲಿ ಏಳುವ ಯೋಜನೆಗಳು ಹಲವು; ಈಡೇರುವುದಾದರೊ ಸರ್ವೇಶ್ವರನ ಸಂಕಲ್ಪವು.</verse>
				<verse number="22">ಅತಿಯಾಸೆ ಗತಿಕೇಡು; ಇದ್ದೂ ಇಲ್ಲವೆನ್ನುವವನಿಗಿಂತ ಏನೂ ಇಲ್ಲದವನೆ ಲೇಸು.</verse>
				<verse number="23">ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಿಗೆ ಜೀವಪ್ರಾಪ್ತಿ; ಅಂಥವನು ಸಂತುಷ್ಟನಾಗಿ ಬಾಳುವನು, ಅವನಿಗೆ ಕೇಡು ಸಂಭವಿಸದು.</verse>
				<verse number="24">ಮೈಗಳ್ಳ ಕೈ ಹಾಕುತ್ತಾನೆ ತುತ್ತಿಗೆ; ಆದರೆ ಎತ್ತಲಾರ ಬಾಯ ಹತ್ತಿರಕ್ಕೆ.</verse>
				<verse number="25">ಕುಚೋದ್ಯನಿಗೆ ಹೊಡೆ, ಮುಗ್ಧರು ಅದನ್ನು ಕಂಡು ಜಾಣರಾಗುವರು; ಜ್ಞಾನಿಯನ್ನು ಗದರಿಸಿದರೆ ಸಾಕು, ಅವನು ಮತ್ತಷ್ಟು ಜ್ಞಾನಿಯಾಗುವನು.</verse>
				<verse number="26">ತಂದೆಯನ್ನು ಹೊಡೆದು, ತಾಯಿಯನ್ನು ಓಡಿಸುವ ಮಗನು ನಿಂದೆ ಅವಮಾನಗಳಿಗೆ ತುತ್ತಾಗುವನು.</verse>
				<verse number="27">ಮಗನೇ, ಉಪದೇಶ ಕೇಳುವುದನ್ನು ನಿಲ್ಲಿಸಬೇಡ; ನಿಲ್ಲಿಸಿದೆಯಾದರೆ ಬುದ್ಧಿಮಾತಿನಿಂದ ವಂಚಿತನಾಗುವೆ.</verse>
				<verse number="28">ನೀಚಸಾಕ್ಷಿ ನ್ಯಾಯತೀರ್ಪನ್ನು ಮರ್ಯಾದಿಸನು; ದುಷ್ಟಸಾಕ್ಷಿ ದ್ರೋಹವನ್ನೂ ನುಂಗಿಬಿಡುವನು.</verse>
				<verse number="29">ಕುಚೋದ್ಯನಿಗೆ ಕಾದಿದೆ ನ್ಯಾಯತೀರ್ಪು; ದಡ್ಡನ ಬೆನ್ನಿಗೆ ಬೀಳಲಿದೆ ದೊಣ್ಣೆಪೆಟ್ಟು.</verse>
			</chapter>
			<chapter number="20">
				<verse number="1">ದ್ರಾಕ್ಷಾರಸದಿಂದ ನಗೆಯಾಟ, ಮಧ್ಯದಿಂದ ಕೂಗಾಟ; ಇವುಗಳಿಂದ ತೂರಾಟಕ್ಕೆ ತುತ್ತಾಗುವವನು ಜ್ಞಾನಿಯಲ್ಲ.</verse>
				<verse number="2">ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು; ಅವನನ್ನು ಕೆಣಕುವವನು ಪ್ರಾಣಕ್ಕೆ ಅಪಾಯ ತಂದುಕೊಳ್ವನು.</verse>
				<verse number="3">ಕಲಹಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು; ಕಲಹಕ್ಕೆ ಕೈಹಾಕುವ ಪ್ರತಿಯೊಬ್ಬನು ಮೂರ್ಖನು.</verse>
				<verse number="4">ಮೈಗಳ್ಳನು ಮಳೆಗಾಲದಲ್ಲೂ ಹೊಲ ಉಳಲಾರನು; ಸುಗ್ಗಿಕಾಲದಲ್ಲಿ ಅಂಗಲಾಚಿದರೂ ಅವನಿಗೆ ಬೆಳೆಸಿಗಲಾರದು.</verse>
				<verse number="5">ಮಾನವನ ಅಂತರಾಲೋಚನೆಗಳು ಆಳವಾದ ಜಲನಿಧಿ; ವಿವೇಕಿಯಾದ ವ್ಯಕ್ತಿ ಅದನ್ನು ಹೊರ ತೆಗೆಯಬಲ್ಲ ಸೇದಿ.</verse>
				<verse number="6">ಸ್ನೇಹಿತರೆಂದು ಹೇಳಿಕೊಳ್ಳುವವರು ಬಹುಮಂದಿ; ಆದರೆ ನಂಬಿಗಸ್ತ ಸ್ನೇಹಿತನು ಸಿಗುವುದೆಲ್ಲಿ?</verse>
				<verse number="7">ನಿರ್ದೋಷಿಗಳಾಗಿ ನಡೆಯುತ್ತಾರೆ ನೀತಿವಂತರು; ಅವರು ಗತಿಸಿದ ಮೇಲೂ ಅವರ ಸಂತತಿಯವರು ಭಾಗ್ಯವಂತರು.</verse>
				<verse number="8">ರಾಜನು ನ್ಯಾಯಾಸನದ ಮೇಲೆ ವಿರಾಜಿಸುವಾಗ ಕೆಟ್ಟತನವನ್ನು ತೂರಿಬಿಡುವನು ದೃಷ್ಟಿಯಿಂದ.</verse>
				<verse number="9">“ಹೃದಯವನ್ನು ಪರಿಶುದ್ಧವಾಗಿ ಇಟ್ಟುಕೊಂಡಿದ್ದೇನೆ; ಪಾಪವಿಮುಕ್ತನಾಗಿ ಪವಿತ್ರನಾಗಿದ್ದೇನೆ” ಎಂದು ಹೇಳಬಲ್ಲವನಾರು?</verse>
				<verse number="10">ಕಳ್ಳ ಕಲ್ಲುತೂಕಗಳನ್ನೂ ಕಳ್ಳ ಅಳತೆಪಾತ್ರೆಗಳನ್ನೂ ಬಳಸುವವರನ್ನು ಕಂಡರೆ ಸರ್ವೇಶ್ವರನಿಗೆ ಅಸಹ್ಯ.</verse>
				<verse number="11">ಹುಡುಗನಾದರೂ ನಡತೆಯಲ್ಲೇ ತೋರ್ಪಡಿಸಿಕೊಳ್ಳುವನು ತನ್ನ ಗುಣ ಶುದ್ಧವೋ, ಸತ್ಯವೋ ಎಂಬುದನ್ನು.</verse>
				<verse number="12">ಕೇಳುವ ಕಿವಿ, ನೋಡುವ ಕಣ್ಣು ಇವೆರಡನ್ನು ಉಂಟುಮಾಡಿದವ ಸರ್ವೇಶ್ವರ.</verse>
				<verse number="13">ನಿದ್ದೆಯಲ್ಲೆ ನಿರತನಾಗಿರಬೇಡ, ಬಡವನಾಗಿ ಬಿಡುವೆ. ಕಣ್ಣು ತೆರೆದು ದುಡಿ, ಹೊಟ್ಟೆತುಂಬ ಊಟ ಪಡೆವೆ.</verse>
				<verse number="14">ಕೊಳ್ಳುವಾಗ ‘ಅದು ಚೆನ್ನಾಗಿಲ್ಲ, ಇದು ಚೆನ್ನಾಗಿಲ್ಲ’ ಅನ್ನುತ್ತಾನೆ; ಕೊಂಡಾದ ಮೇಲೆ ಮಾಡಿದ ಚೌಕಾಶಿಗಾಗಿ ಹೆಚ್ಚಳ ಪಡುತ್ತಾನೆ.</verse>
				<verse number="15">ಹೊನ್ನು ಉಂಟು, ಹವಳದ ರಾಶಿ ಉಂಟು; ಆದರೆ ತಿಳುವಳಿಕೆಯುಳ್ಳ ತುಟಿಗಳು ಬೆಲೆಮೀರಿದ ಆಭರಣಗಳು.</verse>
				<verse number="16">ಅಪರಿಚಿತನಿಗೆ ಹೊಣೆಯಾದವನ ಬಟ್ಟೆ ಕಿತ್ತುಕೊ; ಅಪರಿಚಿತಳಿಗೆ ಹೊಣೆ ನಿಲ್ಲುವವನನ್ನೆ ಒತ್ತೆ ಇಟ್ಟುಕೊ.</verse>
				<verse number="17">ವಂಚಿಸಿ ಪಡೆದ ಊಟ ಬಲು ರುಚಿ; ಆಮೇಲೆ ಬಾಯಿ ತುಂಬ ಕಲ್ಲುಜಲ್ಲಿ.</verse>
				<verse number="18">ಉದ್ದೇಶಗಳು ಕೈಗೂಡುವುವು ಹಿತಾಲೋಚನೆಯಿಂದ; ಬುದ್ಧಿವಂತರ ಆಲೋಚನೆ ಕೇಳದೆ ಹೂಡಬೇಡ ಯುದ್ಧ.</verse>
				<verse number="19">ಗುಟ್ಟನ್ನು ರಟ್ಟು ಮಾಡದಿರನು ಚಾಡಿಕೋರ; ತುಟಿ ಬಿಗಿಹಿಡಿಯದವನ ಗೊಡವೆ ನಿನಗೆ ಬೇಡ.</verse>
				<verse number="20">ಹೆತ್ತವರನ್ನು ಶಪಿಸುವವನ ದೀಪ ಕಾರಿರುಳಲ್ಲೆ ಆರಿಹೋಗುವುದು ಖಚಿತ.</verse>
				<verse number="21">ಬೇಗಬೇಗನೆ ಬಾಚಿಕೊಂಡ ಮೊದಲ ಸೊತ್ತು, ಕೊನೆಯಲ್ಲಿ ಕಳೆದುಹೋಗುವುದು ನಿಶ್ಚಿತ.</verse>
				<verse number="22">“ಕೇಡಿಗೆ ಕೇಡು” ಎಂದು ಮುಯ್ಯಿತೀರಿಸುವುದು ಬೇಡ; ಸರ್ವೇಶ್ವರನಲ್ಲಿ ಭರವಸೆಯಿಡು, ಆತ ನಿನ್ನ ಕೈಬಿಡ.</verse>
				<verse number="23">ತಾರತಮ್ಯದ ತೂಕದ ಕಲ್ಲು ಸರ್ವೇಶ್ವರನಿಗೆ ಅಸಹ್ಯ; ಮೋಸದ ತಕ್ಕಡಿಯನ್ನು ಬಳಸುವುದು ಸರಿಯಲ್ಲ.</verse>
				<verse number="24">ಮಾನವನ ಸ್ಥಿತಿಗತಿ ಸರ್ವೇಶ್ವರನ ಏರ್ಪಾಡು; ಮನುಷ್ಯ ತನ್ನ ಮಾರ್ಗವನ್ನು ತಾನೇ ಹೇಗೆ ತಿಳಿದಾನು?</verse>
				<verse number="25">ದುಡುಕಿ ದೇವರಿಗೆ ಮುಡಿಪುಕಟ್ಟುವುದು, ಹರಕೆ ಹೊತ್ತ ಮೇಲೆ ವಿಚಾರಮಾಡುವುದು, ಉರುಳಿಗೆ ಸಿಕ್ಕಿಕೊಂಡಂತೆ ಆಗುವುದು.</verse>
				<verse number="26">ಜ್ಞಾನಿಯಾದ ಅರಸ ಚದರಿಸಿಬಿಡುವನು ದುಷ್ಟರನ್ನು; ಅವರ ಮೇಲೆ ಉರುಳಿಸುವನು ಕಣದ ಗುಂಡನ್ನು.</verse>
				<verse number="27">ಮನುಷ್ಯನ ಆತ್ಮ ಸರ್ವೇಶ್ವರನು ಕೊಟ್ಟ ದೀಪ; ಅಂತರಂಗವನ್ನೆಲ್ಲ ಶೋಧಿಸಬಲ್ಲದು ಅದರ ಪ್ರಕಾಶ.</verse>
				<verse number="28">ಪ್ರೀತಿಸತ್ಯತೆಗಳು ರಾಜನನ್ನು ಕಾಪಾಡುವ ಕವಚ; ಕರುಣೆಯೇ ಅವನ ಸಿಂಹಾಸನಕ್ಕೆ ಸ್ಥಿರಾಧಾರ.</verse>
				<verse number="29">ಯುವಕರಿಗೆ ಬಲವೆ ಭೂಷಣ; ಮುದುಕರಿಗೆ ನರೆಯೆ ಕಿರೀಟ.</verse>
				<verse number="30">ಗಾಯಗೊಳಿಸುವ ಏಟು ಕೆಟ್ಟದ್ದನ್ನು ತೊಳೆಯಬಲ್ಲ ಮದ್ದು; ಅಂತರಂಗವನ್ನೂ ಮುಟ್ಟಬಲ್ಲದು ಆ ಪೆಟ್ಟು.</verse>
			</chapter>
			<chapter number="21">
				<verse number="1">ರಾಜನ ಹೃದಯ ಸರ್ವೇಶ್ವರನ ಕೈಯಲ್ಲಿ; ತಿರುಗಿಸಬಲ್ಲ ಆತ ಅದನ್ನು ನೀರಿನ ಕಾಲುವೆಯ ಪರಿ.</verse>
				<verse number="2">ಮಾನವರ ನಡವಳಿಕೆ ಅವರವರ ನೋಟಕ್ಕೆ ನೇರ; ಅವರ ಅಂತರಂಗವನ್ನು ವೀಕ್ಷಿಸಬಲ್ಲವನೋ ಸರ್ವೇಶ್ವರ.</verse>
				<verse number="3">ನ್ಯಾಯನೀತಿಗಳು ಬಲಿಯರ್ಪಣೆಗಿಂತ ಶ್ರೇಷ್ಠ; ಸರ್ವೇಶ್ವರನಿಗೆ ಅವು ಬಲು ಇಷ್ಟ.</verse>
				<verse number="4">ಗರ್ವದ ನೋಟ, ಉಬ್ಬಿದ ಎದೆ, ಇವು ದುರುಳರೊಳು ಕಾಣುವ ಪಾಪದ ಕಿಡಿಗಳು.</verse>
				<verse number="5">ಶ್ರಮಜೀವಿಗಳ ಯೋಜನೆಯಿಂದ ಸಮೃದ್ಧಿ; ತಾಳ್ಮೆಯಿಲ್ಲದ ತ್ವರೆಯಿಂದ ಅಧೋಗತಿ.</verse>
				<verse number="6">ಹಬೆಯಂತೆ ನಾಪತ್ತೆ ಸುಳ್ಳಿನಿಂದ ಸಿಕ್ಕಿದ ಸಂಪತ್ತು; ಮೃತ್ಯುಪಾಶದಂತೆ ಅದೊಂದು ವಿಪತ್ತು.</verse>
				<verse number="7">ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ, ಅವರನ್ನೇ ಎಳೆದೊಯ್ಯುವುದು ಅವರ ಹಿಂಸಾಚಾರ.</verse>
				<verse number="8">ದೋಷಿಯ ದಾರಿ ಸೊಟ್ಟಗೆ; ದೋಷರಹಿತನ ನಡತೆ ನೆಟ್ಟಗೆ.</verse>
				<verse number="9">ಜಗಳಗಂಟಿಯೊಡನೆ ಮಹಡಿ ಮನೆಯಲ್ಲಿರುವುದಕ್ಕಿಂತ ಗುಡಿಸಲಿನ ಮೂಲೆಯಲ್ಲಿ ಒಂಟಿಯಾಗಿ ವಾಸಿಸುವುದು ಲೇಸು.</verse>
				<verse number="10">ದುರಾತ್ಮನ ಮನಸ್ಸು ಕೇಡಿನ ಮೇಲೆ; ದಯೆತೋರಿಸನಾತ ನೆರೆಯವನ ಮೇಲೆ.</verse>
				<verse number="11">ಕುಚೋದ್ಯನಿಗೆ ದಂಡನೆಯಾದರೆ ಮುಗ್ಧನಿಗೆ ಜ್ಞಾನಗಳಿಕೆ; ಜ್ಞಾನಿಗೆ ಶಿಕ್ಷೆಯಾದರೆ ತಾನೆ ಹೊಂದುವನು ತಿಳುವಳಿಕೆ.</verse>
				<verse number="12">ಸತ್ಯಸ್ವರೂಪನ ದೃಷ್ಟಿ ದುಷ್ಟರ ಮನೆಯ ಮೇಲೆ; ಆ ದುರುಳರನ್ನು ದಬ್ಬಿಬಿಡುವನು ಕೇಡಿಗೆ.</verse>
				<verse number="13">ಬಡವನ ಮೊರೆಗೆ ಕಿವಿ ಮುಚ್ಚಿಕೊಳ್ಳುವವನೇ, ನೀನೇ ಮೊರೆಯಿಡುವಾಗ ಉತ್ತರಕೊಡುವವರಾರು ನಿನಗೆ?</verse>
				<verse number="14">ಗುಟ್ಟಾಗಿ ಬಹುಮಾನ ಕೊಟ್ಟು ಸಿಟ್ಟನ್ನು ಅಡಗಿಸುತ್ತಾರೆ; ಮಡಿಲಲ್ಲಿ ಲಂಚವನ್ನು ಮುಚ್ಚಿಟ್ಟು ಕೋಪವನ್ನು ಆರಿಸುತ್ತಾರೆ.</verse>
				<verse number="15">ನ್ಯಾಯವಾದ ತೀರ್ಪಿನಿಂದ ಸಜ್ಜನರಿಗೆ ಸಂತಸ; ದುರ್ಜನರಿಗಾದರೊ ಅದು ತರುತ್ತದೆ ಸಂಕಟ.</verse>
				<verse number="16">ಬುದ್ಧಿಮಾರ್ಗ ಬಿಟ್ಟು ನಡೆದವನು ಪ್ರೇತಗಳ ನಡುವೆ ವಿಶ್ರಾಂತಿ ಪಡೆಯುವನು.</verse>
				<verse number="17">ಭೋಗಾಸಕ್ತನು ಬಡವನಾಗುವನು, ಮಧ್ಯಸುಗಂಧಗಳನ್ನು ಬಯಸುವವನು ಧನವಂತನಾಗನು.</verse>
				<verse number="18">ದುರ್ಜನರು ಸಜ್ಜನರಿಗೆ ದ್ರೋಹಿಗಳು; ನೀತಿವಂತರಿಗೆ ಮಾಡಲಾಶಿಸುವ ಕೇಡಿಗೆ ತಾವೇ ಈಡಾಗುವರು.</verse>
				<verse number="19">ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲು ಕಾಡಿನಲ್ಲಿ ಒಂಟಿಯಾಗಿ ವಾಸಿಸುವುದೇ ಲೇಸು.</verse>
				<verse number="20">ಬುದ್ಧಿವಂತನ ಮನೆಯ ಸಿರಿ, ಎಣ್ಣೆ ಬೆಣ್ಣೆ; ಬುದ್ಧಿಹೀನನು ನುಂಗಿಬಿಡುವನು ಸರ್ವಸ್ವವನ್ನೆ.</verse>
				<verse number="21">ನೀತಿ ಪ್ರೀತಿ ಪಾಲಿಸುವವನಿಗೆ ಲಭಿಸುವುದು ಆಯುಸ್ಸು, ಕೀರ್ತಿ, ದೊಡ್ಡಸ್ತಿಕೆ.</verse>
				<verse number="22">ಜ್ಞಾನಿ ಹಿಡಿಯಬಲ್ಲನು ಬಲಿಷ್ಠರ ಪಟ್ಟಣವನ್ನು ಕೆಡವಬಲ್ಲನು ಅವರ ಬಲವಾದ ಕೋಟೆಯನ್ನು.</verse>
				<verse number="23">ಬಾಯನ್ನೂ ನಾಲಿಗೆಯನ್ನೂ ಕಾಯಬಲ್ಲವನು ಜಯಿಸುವನು ತೊಂದರೆ ತಾಪತ್ರಯಗಳನ್ನು.</verse>
				<verse number="24">ಸೊಕ್ಕೇರಿದ ಗರ್ವಿ ಕುಚೋದ್ಯನೆನಿಸಿಕೊಳ್ಳುವನು; ಅಹಂಕಾರ, ಮದಮತ್ಸರಗಳಿಂದ ಅವನು ವರ್ತಿಸುವನು.</verse>
				<verse number="25">ಮೈಗಳ್ಳನನ್ನು ಕೊಲ್ಲುವುದು ಅವನ ಇಚ್ಛೆಯೆ; ಬಗ್ಗದು ಅವನ ಕೈ ದುಡಿಮೆಗೆ.</verse>
				<verse number="26">ಇಲ್ಲವೆನ್ನದೆ ಕೊಡುವವರು ಸಜ್ಜನರು; ದಾನವೆಲ್ಲ ಬೇಕೆನ್ನುತ್ತಿರುವವನು ಜಿಪುಣನು.</verse>
				<verse number="27">ದುಷ್ಟರು ಅರ್ಪಿಸುವ ಬಲಿಯಜ್ಞ ಅಸಹ್ಯ; ದುರಾಲೋಚನೆಯಿಂದ ಅರ್ಪಿಸುವುದು ಮತ್ತೂ ಅಸಹ್ಯ.</verse>
				<verse number="28">ಸುಳ್ಳು ಸಾಕ್ಷಿ ಹೇಳುವವನೇ ಅಳಿದುಹೋಗುವನು; ಕೇಳಿದ್ದನ್ನೆ ಹೇಳುವವನ ಸಾಕ್ಷಿ ಅಳಿಯದೆ ಉಳಿಯುವುದು.</verse>
				<verse number="29">ದುಷ್ಟನ ಮುಖದಲ್ಲಿ ಹಟಭಾವನೆ; ಸಜ್ಜನನ ನಡತೆಯಲ್ಲಿ ಸದೃಢತೆ.</verse>
				<verse number="30">ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.</verse>
				<verse number="31">ಯುದ್ಧಕ್ಕಾಗಿ ಸನ್ನದ್ಧವಾಗಿರಬಹುದು ಅಶ್ವಬಲ; ಜಯಸಿಗುವುದಾದರೋ ಸರ್ವೇಶ್ವರನಿಂದ.</verse>
			</chapter>
			<chapter number="22">
				<verse number="1">ಅತುಳ ಐಶ್ವರ್ಯಕ್ಕಿಂತ ಒಳ್ಳೆಯ ಹೆಸರು ಉತ್ತಮ; ಬೆಳ್ಳಿಬಂಗಾರಕ್ಕಿಂತ ಪ್ರೀತಿ ವಿಶ್ವಾಸ ಅಮೂಲ್ಯ.</verse>
				<verse number="2">ಬಡವರು ಬಲ್ಲಿದರು ಸ್ಥಿತಿಯಲ್ಲಿ ಎದುರುಬದುರು; ಅವರೆಲ್ಲರನ್ನು ಸೃಷ್ಟಿಸಿದಾತ ಸರ್ವೇಶ್ವರನು.</verse>
				<verse number="3">ಜಾಣ ಕೇಡನ್ನು ಕಂಡು ಅಡಗಿಕೊಳ್ಳುತ್ತಾನೆ; ಕೋಣ ಮುನ್ನುಗ್ಗಿ ಹಾನಿಗೆ ಈಡಾಗುತ್ತಾನೆ.</verse>
				<verse number="4">ಸರ್ವೇಶ್ವರನಲ್ಲಿ ಭಯಭಕ್ತಿ ದೀನಮನೋಭಾವ, ಇವು ನೀಡುವ ಫಲ-ಸಂಪತ್ತು, ಸನ್ಮಾನ, ಆಯುಸ್ಸು.</verse>
				<verse number="5">ವಕ್ರಬುದ್ಧಿಯುಳ್ಳವನ ಹಾದಿತುಂಬ ಮುಳ್ಳು, ಉರುಳು; ಅದರಿಂದ ದೂರವಿರುವನು ಪ್ರಾಣದಾಸೆಯುಳ್ಳವನು.</verse>
				<verse number="6">ಬಾಲ್ಯದಲ್ಲೇ ಮಕ್ಕಳನ್ನು ಸರಿದಾರಿಯಲ್ಲಿ ಪಳಗಿಸು; ಮುಪ್ಪಿನಲ್ಲೂ ಅವರು ಆ ಪದ್ಧತಿ ಮೀರಿ ನಡೆಯದಿರಲಿ.</verse>
				<verse number="7">ಬಲ್ಲಿದನು ಬಡವನಿಗೆ ಒಡೆಯ; ಸಾಲಗಾರನು ಸಾಲಕೊಟ್ಟವನಿಗೆ ಸೇವಕ.</verse>
				<verse number="8">ಕೆಟ್ಟತನವನ್ನು ಬಿತ್ತುವವನು ಕೇಡನ್ನೆ ಕೊಯ್ಯುವನು; ಅವನ ಸಿಟ್ಟು ಅವನನ್ನೆ ಸುಟ್ಟುಬಿಡುವುದು.</verse>
				<verse number="9">ಉದಾರ ದೃಷ್ಟಿಯುಳ್ಳವನು ಆಶೀರ್ವದಿತನು; ಆಹಾರವನ್ನು ಬಡವರೊಂದಿಗೆ ಆತ ಹಂಚಿಕೊಳ್ಳುವನು.</verse>
				<verse number="10">ಕುಚೋದ್ಯನನ್ನು ಓಡಿಸಿಬಿಟ್ಟರೆ ಜಗಳ ನಿಲ್ಲುವುದು, ವ್ಯಾಜ್ಯ ಮುಗಿಯುವುದು, ನಿಂದೆ ಅವಮಾನ ಇಲ್ಲದಾಗುವುದು.</verse>
				<verse number="11">ಸವಿಮಾತಿನಿಂದ ಅರಸನ ಗೆಳೆತನ ಪಡೆಯಬಹುದು; ಸರ್ವೇಶ್ವರ ಬಯಸುವುದು ಅಂತರಂಗ ಶುದ್ಧಿಯನ್ನು.</verse>
				<verse number="12">ಸರ್ವೇಶ್ವರನ ದೃಷ್ಟಿ ಸಜ್ಜನರನ್ನು ಕಾಯುವುದು; ವಂಚಕರ ಮಾತನ್ನು ನಿರರ್ಥಕಗೊಳಿಸುವುದು.</verse>
				<verse number="13">“ಹೊರಗಡೆ ಕಾದಿದೆ ಸಿಂಹ, ಬೀದಿಗೆ ಕಾಲಿಟ್ಟರೆ ತಿಂದುಬಿಡುವುದು!” ಇದು ಮೈಗಳ್ಳನ ಪಿಳ್ಳೆಯ ನೆವ.</verse>
				<verse number="14">ವ್ಯಭಿಚಾರಿಣಿಯ ಬಾಯಿ ಆಳವಾದ ಬಾವಿ; ಸರ್ವೇಶ್ವರನಿಗೆ ಸಿಟ್ಟೆಬ್ಬಿಸಿದವನು ಬೀಳುವನು ಅದರಲ್ಲಿ.</verse>
				<verse number="15">ಮಂಕುತನ ಮಕ್ಕಳ ಮನಸ್ಸಿಗೆ ಸಹಜ; ಬೆತ್ತದ ಬಿಸಿಯಿಂದ ಅದನ್ನು ತೊಲಗಿಸಲು ಸಾಧ್ಯ.</verse>
				<verse number="16">ಹಣ ಹೆಚ್ಚಿಸಲು ಬಡವರನ್ನು ಪೀಡಿಸುವವನಿಗೆ, ಲಂಚಕೊಟ್ಟು ಬಲ್ಲಿದರನ್ನು ಒಲಿಸುವವನಿಗೆ, ಕೊರತೆಯೆ ಕಟ್ಟಿಟ್ಟ ಬುತ್ತಿ.</verse>
				<verse number="17">ಜ್ಞಾನಿಗಳ ನುಡಿಗಳನ್ನು ಕಿವಿಗೊಟ್ಟು ಕೇಳು; ನನ್ನ ಬೋಧನೆಯನ್ನು ಮನಸ್ಸಿನಲ್ಲಿಡು.</verse>
				<verse number="18">ಆ ನುಡಿಗಳನ್ನು ನಿನ್ನ ಅಂತರಂಗದಲ್ಲಿ ಕಾದಿಡು; ಅವು ನಿನ್ನ ತುಟಿಯ ಮೇಲೆ ಸಿದ್ಧವಿದ್ದರೆ ಒಳಿತು.</verse>
				<verse number="19">ಸರ್ವೇಶ್ವರನಲ್ಲಿ ನೀನು ಭರವಸೆ ಇಡುವಂತೆ, ಅವುಗಳನ್ನು ತಿಳಿಸಿರುವೆನು ಇಂದೆ.</verse>
				<verse number="20">ಉಚಿತಾಲೋಚನೆಯನ್ನೂ ತಿಳುವಳಿಕೆಯನ್ನೂ ನೀಡಬಲ್ಲ ಮೂವತ್ತು ವಚನಗಳನ್ನು ನಿನಗೆ ಈ ಮುಂಚೆಯೆ ಬರೆದಿರುವೆನಲ್ಲಾ.</verse>
				<verse number="21">ಸತ್ಯವಾದ ಆ ವಚನಗಳು ಎಷ್ಟೋ ಯಥಾರ್ಥವೆಂದು ತಿಳಿದು ನಿನ್ನನ್ನು ಪ್ರಶ್ನಿಸಿದವರಿಗೆ ಅವುಗಳನ್ನು ಅರಿಕೆಮಾಡು.</verse>
				<verse number="22">ಬಡವರಿಗೆ ದಿಕ್ಕಿಲ್ಲವೆಂದು ಅವರನ್ನು ಶೋಷಣೆಗೆ ಗುರಿಮಾಡಬೇಡ; ನ್ಯಾಯಾಲಯದಲ್ಲಿ ಆ ದಟ್ಟದರಿದ್ರರನ್ನು ಬಾಧಿಸಬೇಡ;</verse>
				<verse number="23">ಸರ್ವೇಶ್ವರನೇ ಅವರ ಪರವಾಗಿ ವಾದಿಸುವನು; ಸೂರೆಮಾಡಬಂದವರ ಪ್ರಾಣವನ್ನು ಆತನೆ ಸೂರೆ ಮಾಡುವನು.</verse>
				<verse number="24">ಕೋಪಿಷ್ಠನ ಸಂಗಡ ಸ್ನೇಹ ಬೆಳೆಸಬೇಡ, ಸಿಟ್ಟುಗಾರನ ಸಹವಾಸ ಮಾಡಬೇಡ.</verse>
				<verse number="25">ಹಾಗೆ ಮಾಡಿದರೆ ಅವರ ದುರ್ನಡತೆಯನ್ನು ಕಲಿತುಕೊಳ್ಳುವೆ, ನಿನ್ನ ಪ್ರಾಣ ಉರುಲಿಗೆ ತುತ್ತಾಗುವುದು, ಎಚ್ಚರಿಕೆ!</verse>
				<verse number="26">ಬೇರೆಯವರ ಸಾಲಕ್ಕೆ ಹೊಣೆಯಾಗಬೇಡ, ಅದಕ್ಕಾಗಿ ಕೈ ಮೇಲೆ ಕೈ ಇಟ್ಟು ಜಾಮೀನು ನಿಲ್ಲಬೇಡ.</verse>
				<verse number="27">ಆ ಸಾಲ ತೀರಿಸಲು ನಿನ್ನಿಂದ ಸಾಧ್ಯವಾಗದಿರಲು, ಅವನೇಕೆ ನೀನು ಮಲಗಿರುವ ಹಾಸಿಗೆಯನ್ನೇ ಕಿತ್ತುಕೊಳ್ಳಬೇಕು?</verse>
				<verse number="28">ನಿನ್ನ ಪೂರ್ವಜರು ಹಾಕಿರುವ ಎಲ್ಲೆ ಗುರುತನ್ನು, ಸ್ಥಳಾಂತರಿಸಬೇಡ ನೀನು.</verse>
				<verse number="29">ತನ್ನ ಕೆಲಸದಲ್ಲಿ ನಿಪುಣನಾದವನನ್ನು ಗುರುತುಹಚ್ಚು; ಅಂಥವನು ರಾಜರನ್ನಲ್ಲದೆ ನೀಚರನ್ನು ಸೇವಿಸಲಾರನು.</verse>
			</chapter>
			<chapter number="23">
				<verse number="1">ಒಡೆಯನ ಸಂಗಡ ಊಟಕ್ಕೆ ಕುಳಿತುಕೊಂಡಾಗ ಯಾರ ಮುಂದಿರುವೆ ಎಂಬುದನ್ನು ಮರೆಯಬೇಡ.</verse>
				<verse number="2">ತಡೆಯಲಾಗದ ಹಸಿವು ನಿನಗಿದ್ದರೂ ಕಂಠದಲ್ಲಿ ಕತ್ತಿಯಿರುವಂತೆ ಸಂಯಮದಿಂದಿರು.</verse>
				<verse number="3">ಒಡೆಯನ ರುಚಿಪದಾರ್ಥಗಳನ್ನು ಬಯಸಬೇಡ. ಅವುಗಳಲ್ಲಿ ಮರೆಮೋಸ ಅಡಗಿರಲು ಸಾಧ್ಯ.</verse>
				<verse number="4">ದುಡ್ಡಿನಾಸೆಗಾಗಿಯೆ ದುಡಿಯಬೇಡ; ಬುದ್ಧಿಯನ್ನೆಲ್ಲಾ ಅದಕ್ಕಾಗಿಯೇ ವ್ಯಯಮಾಡಬೇಡ.</verse>
				<verse number="5">ನಿನ್ನ ದೃಷ್ಟಿ ಅದರ ಮೇಲೆ ಬೀಳುವಷ್ಟರಲ್ಲೆ ಅದು ಮಾಯ, ರೆಕ್ಕೆ ಕಟ್ಟಿಕೊಂಡ ಗರುಡನಂತೆ ಆಗಸದತ್ತ ಅದರ ಓಟ.</verse>
				<verse number="6">ಜಿಪುಣ ದೃಷ್ಟಿಯವನು ಬಡಿಸುವ ಅನ್ನವನ್ನು ಉಣಬೇಡ; ಅವನ ರುಚಿಪದಾರ್ಥಗಳನ್ನು ಬಯಸಬೇಡ.</verse>
				<verse number="7">ಅವನು ತನ್ನ ಮನದಲ್ಲೆ ಲೆಕ್ಕಿಸುತ್ತಿರುತ್ತಾನೆ “ಉಣ್ಣು, ಕುಡಿ” ಎಂದರೂ; ಅವನಿಗಿಲ್ಲ ನಿನ್ನ ಮೇಲೆ ಅಕ್ಕರೆ.</verse>
				<verse number="8">ನೀನು ತಿಂದ ತುತ್ತನ್ನೆ ಕಕ್ಕಿ ಬಿಡುವೆ, ನೀನು ಆಡಿದ ಸವಿಮಾತೆಲ್ಲ ವ್ಯರ್ಥವೆ.</verse>
				<verse number="9">ಮೂಢನ ಸಂಗಡ ಮಾತನಾಡಬೇಡ; ನಿನ್ನ ಬುದ್ಧಿಮಾತನ್ನು ಅವನು ಮಾನ್ಯಮಾಡ.</verse>
				<verse number="10">ಪುರಾತನ ಎಲ್ಲೆ ಗುರುತನ್ನು ಒತ್ತರಿಸಬೇಡ; ಅನಾಥರ ಹೊಲಗದ್ದೆಯನ್ನು ಆಕ್ರಮಿಸಬೇಡ.</verse>
				<verse number="11">ಅವರನ್ನು ಕಾಪಾಡುವ ಸರ್ವೇಶ್ವರ ಬಲಶಾಲಿ, ಆತ ನಿನ್ನೊಡನೆ ವಾದಿಸಬಲ್ಲ ಅವರ ಪರವಾಗಿ.</verse>
				<verse number="12">ಉಪದೇಶವನ್ನು ಕೇಳುವುದರತ್ತ ಮನಸ್ಸಿಡು; ತಿಳುವಳಿಕೆಯ ಮಾತುಗಳಿಗೆ ಕಿವಿಗೊಡು.</verse>
				<verse number="13">ಮಕ್ಕಳನ್ನು ದಂಡಿಸಿ ತಿದ್ದಲು ಹಿಂಜರಿಯಬೇಕಾಗಿಲ್ಲ; ಬೆತ್ತದ ಏಟಿಗೆ ಅವರು ಸತ್ತುಹೋಗುವುದಿಲ್ಲ.</verse>
				<verse number="14">ಬೆತ್ತದಿಂದ ಬೇಕಾದರೆ ಹೊಡೆ; ಮಗುವಿನ ಆತ್ಮ ಪಾತಾಳಕ್ಕೆ ಬೀಳದಂತೆ ತಡೆ.</verse>
				<verse number="15">ಮಗನೇ, ನೀನು ಬುದ್ಧಿವಂತನಾದರೆ ಆನಂದವೇ ಆನಂದ ನನ್ನ ಮನಸ್ಸಿಗೆ.</verse>
				<verse number="16">ನಿನ್ನ ಬಾಯಿಂದ ಹಿತೋಕ್ತಿಗಳು ಬಂದರೆ ಸಂತೋಷ ನನ್ನ ಅಂತರಾತ್ಮಕ್ಕೆ.</verse>
				<verse number="17">ಪಾಪಿಗಳನ್ನು ನೋಡಿ ಅಸೂಯೆಪಡಬೇಡ; ಸರ್ವೇಶ್ವರನಲ್ಲಿರಲಿ ನಿರಂತರ ಭಯಭಕ್ತಿ.</verse>
				<verse number="18">ಆಗ ನಿನ್ನ ಭವಿಷ್ಯ ಶುಭದಾಯಕವಾಗಿರುವುದು, ನಿನ್ನ ನಿರೀಕ್ಷೆ ಸಾರ್ಥಕವಾಗುವುದು.</verse>
				<verse number="19">ಮಗನೇ ಕೇಳು, ಬುದ್ಧಿವಂತನಾಗಿರು, ನಿನ್ನ ಮನಸ್ಸನ್ನು ಸನ್ಮಾರ್ಗದತ್ತ ಹರಿಸು.</verse>
				<verse number="20">ಕುಡುಕರೊಡನೆ, ಹೊಟ್ಟೆಬಾಕರೊಡನೆ ಸೇರಬೇಡ; ಮಿತಿಮೀರಿ ಮಾಂಸ ತಿನ್ನುವ ಜನರ ಜೊತೆ ನಿನಗೆ ಬೇಡ.</verse>
				<verse number="21">ಕುಡುಕನಿಗೂ ಹೊಟ್ಟೆಬಾಕನಿಗೂ ಕಾದಿದೆ ದುರ್ಗತಿ; ಹರಕು ಬಟ್ಟೆಗಳನ್ನು ಹೊದಿಸುವುದು ಅವರ ನಿದ್ರಾಸಕ್ತಿ.</verse>
				<verse number="22">ಹೆತ್ತ ತಂದೆಯ ಮಾತಿಗೆ ಕಿವಿಗೊಡು; ಮುಪ್ಪಿನ ತಾಯಿಯನ್ನು ಅಸಡ್ಡೆಮಾಡದಿರು.</verse>
				<verse number="23">ಸತ್ಯವನ್ನು, ಅಂದರೆ ಜ್ಞಾನ, ಸುಶಿಕ್ಷೆ, ವಿವೇಕ ಇವನ್ನು ಬೆಲೆಕೊಟ್ಟಾದರೂ ಕೊಂಡುಕೊ, ಮಾರಿಬಿಡಬೇಡ!</verse>
				<verse number="24">ನೀತಿವಂತನ ತಂದೆಗೆ ಅತಿ ಸಂತೋಷ; ಜ್ಞಾನಿಯನ್ನು ಹೆತ್ತವನಿಗೆ ಅತಿ ಉಲ್ಲಾಸ.</verse>
				<verse number="25">ಹರ್ಷಗೊಳಿಸು ನಿನ್ನ ತಂದೆತಾಯಿಗಳನ್ನು; ಆನಂದಪಡಿಸು ನಿನ್ನ ಹೆತ್ತವಳನ್ನು.</verse>
				<verse number="26">ಮಗನೇ, ನಾನು ಹೇಳುವುದು ನಾಟಲಿ ನಿನ್ನ ಮನಸ್ಸಿಗೆ; ನನ್ನ ನಡತೆ ಆದರ್ಶಕವಾಗಿರಲಿ ನಿನ್ನ ಕಣ್ಣುಗಳಿಗೆ.</verse>
				<verse number="27">ವೇಶ್ಯೆ ಒಂದು ಆಳವಾದ ಬಾವಿ; ವ್ಯಭಿಚಾರಿಣಿ ಇಕ್ಕಟ್ಟಾದ ಗುಳಿ.</verse>
				<verse number="28">ಆಕೆ ಕಳ್ಳನಂತೆ ಹೊಂಚುಹಾಕುತ್ತಾಳೆ; ಅನೇಕರನ್ನು ದ್ರೋಹಿಗಳನ್ನಾಗಿಸುತ್ತಾಳೆ.</verse>
				<verse number="29">ಕಿರಿಚಾಟ, ಕೂಗಾಟ, ಕಿತ್ತಾಟ, ಗೋಳಾಟವು ನಿರ್ನಿಮಿತ್ತ ಹುಣ್ಣು, ಕೆಂಪೇರಿದ ಕಣ್ಣು; ಇವುಗಳನ್ನು ಅನುಭವಿಸುವವರು ಯಾರು?</verse>
				<verse number="30">ಮಿಶ್ರಮದ್ಯಪಾನಗಳಲ್ಲಿ ಆಸಕ್ತನಾಗಿರುವವನೇ, ದ್ರಾಕ್ಷಾರಸ ಕುಡಿಯುತ್ತ ಕಾಲಹರಣ ಮಾಡುವವನೇ.</verse>
				<verse number="31">ಪಾತ್ರೆಯಲ್ಲಿ ಕೆಂಪಗೆ ಥಳಥಳಿಸುವ, ಗಂಟಲಿನೊಳಗೆ, ಸುಲಭವಾಗಿ, ಇಳಿಯುವ, ದ್ರಾಕ್ಷಾರಸದ ಮೇಲೆ ಕಣ್ಣಿಡಬೇಡ.</verse>
				<verse number="32">ಕುಡಿದಾದ ಮೇಲೆ ಅದು ಹಾವಿನಂತೆ ಕಚ್ಚುವುದು; ಹೌದು, ವಿಷಸರ್ಪದಂತೆ ಕಡಿಯುವುದು.</verse>
				<verse number="33">ನಿನ್ನಾ ಕಣ್ಣು ಇಲ್ಲದ್ದನ್ನೇ ಕಾಣುವುದು; ಮನಸ್ಸು ವಕ್ರವಾದುವುಗಳನ್ನೇ ಹೊರಪಡಿಸುವುದು.</verse>
				<verse number="34">ನೀನು ಸಮುದ್ರ ಮಧ್ಯದಲ್ಲಿ ಮಲಗಿ ಇರುವವನಂತೆ ಇರುವೆ, ಹಡಗಿನ ಕಂಬದ ತುದಿಯಲ್ಲಿ ನಿದ್ರಿಸುವವನಂತೆ ಇರುವೆ.</verse>
				<verse number="35">“ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ; ಬಡಿದರೂ ನನಗೆ ತಿಳಿಯಲಿಲ್ಲ; ಎಚ್ಚರವಾಗುವುದು ಯಾವಾಗ? ಮತ್ತೆ ಒಂದು ಸಾರಿ ಕುಡಿಯುವೆನು” ಎಂದುಕೊಳ್ಳುವೆ.</verse>
			</chapter>
			<chapter number="24">
				<verse number="1">ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ. ಅವರ ಒಡನಾಟವನ್ನು ಬಯಸಬೇಡ.</verse>
				<verse number="2">ಅವರ ಮನಸ್ಸು ಯೋಚಿಸುವುದು ಹಿಂಸೆಯನ್ನು, ಅವರ ತುಟಿ ಪ್ರಸ್ತಾಪಿಸುವುದು ಹಾನಿಯನ್ನು.</verse>
				<verse number="3">ಮನೆಕಟ್ಟುವುದಕ್ಕೆ ಜ್ಞಾನವೇ ಸಾಧನ, ಅದನ್ನು ಸ್ಥಿರಗೊಳಿಸುವುದಕ್ಕೆ ವಿವೇಕವೇ ಆಧಾರ.</verse>
				<verse number="4">ಮೌಲ್ಯವೂ ಸುಂದರವೂ ಆದವುಗಳಿಂದ ಅದರ ಕೋಣೆಗಳನ್ನು ತುಂಬಿಸಲು ತಿಳುವಳಿಕೆಯೇ ಉಪಕರಣ.</verse>
				<verse number="5">ಬಲವಂತನಿಗಿಂತ ಬುದ್ಧಿವಂತ ಶಕ್ತಿಶಾಲಿ; ಶೂರನಿಗಿಂತ ಜ್ಞಾನಿಯೇ ಬಲಶಾಲಿ.</verse>
				<verse number="6">ಬುದ್ಧಿವಂತನು ನಾಯಕನನ್ನಿಟ್ಟು ಯುದ್ಧ ನಡೆಸುವನು; ಸುಮಂತ್ರಿಗಳು ಹಲವರಿದ್ದರೆ ಸಂರಕ್ಷಣೆಯಿರುವುದು.</verse>
				<verse number="7">ಜ್ಞಾನವು ಮೂರ್ಖನಿಗೆ ಎಟುಕದಷ್ಟು ಎತ್ತರ; ನ್ಯಾಯಸ್ಥಾನದಲ್ಲಿ ಅವನು ಬಾಯಿಬಿಡಲಾರ.</verse>
				<verse number="8">ಕೇಡನ್ನು ಯೋಚಿಸುವವನು ತುಂಟನು ಎನಿಸಿಕೊಳ್ಳುವನು.</verse>
				<verse number="9">ಮೂರ್ಖನ ಯೋಜನೆ ಪಾಪಮಯ; ಕುಚೋದ್ಯನು ಜನರಿಂದ ತಿರಸ್ಕೃತನು.</verse>
				<verse number="10">ಆಪತ್ತುಕಾಲದಲ್ಲಿ ನೀನು ಎದೆಗುಂದಿದವನಾದರೆ ನಿನ್ನ ಬಲವು ಅಸಮರ್ಪಕವಾದುದೆ.</verse>
				<verse number="11">ಮರಣಕ್ಕೆ ಒಯ್ಯಲ್ಪಟ್ಟವನನ್ನು ಬಿಡಿಸಲು ಯತ್ನಿಸು; ಕೊಲೆಗೆ ಗುರಿಯಾದವನನ್ನು ತಪ್ಪಿಸಲು ಯತ್ನಿಸು.</verse>
				<verse number="12">ಈ ಸಂಗತಿ ಗೊತ್ತಿರಲಿಲ್ಲವೆಂದು ನೆವ ಹೇಳಬೇಡ; ಅಂತರಂಗ ಪರಿಶೋಧಕನಿಗೆ ನಿನ್ನ ಯೋಜನೆ ತಿಳಿದಿಲ್ಲವೆ? ನಿನ್ನ ಮನಸ್ಸನ್ನು ಸಮೀಕ್ಷಿಸುವ ಆತನಿಗೆ ಇದು ಮರೆಯೇ? ಮಾನವನ ಕಾರ್ಯಗಳಿಗೆ ತಕ್ಕಂತೆ ಪ್ರತಿಫಲವನ್ನಾತ ನೀಡುವನಲ್ಲವೆ?</verse>
				<verse number="13">ಮಗನೇ, ಜೇನು ತಿನ್ನು, ಅದು ಚೆನ್ನಾಗಿದೆ; ತೊಟ್ಟಿಕ್ಕುವ ಜೇನುತುಪ್ಪ ನಿನ್ನ ಬಾಯಿಗೆ ಸಿಹಿ ಅಲ್ಲವೇ?</verse>
				<verse number="14">ಅಂತೆಯೇ ಜ್ಞಾನ ನಿನ್ನ ಆತ್ಮಕ್ಕೆ ಸಿಹಿಯೆಂದು ತಿಳಿ; ಅದನ್ನು ಪಡೆದೆಯಾದರೆ ನಿನ್ನ ಭವಿಷ್ಯ ಶುಭಕರ, ನಿನ್ನ ನಿರೀಕ್ಷೆ ಆಗದು ನಿರರ್ಥಕ.</verse>
				<verse number="15">ದುಷ್ಟನೇ, ನೀತಿವಂತನ ಮನೆಗೆ ಕನ್ನಹಾಕಬೇಡ; ಅವನು ಕೂಡಿಸಿದ್ದನ್ನು ಕೊಳ್ಳೆಹೊಡೆಯಬೇಡ.</verse>
				<verse number="16">ನೀತಿವಂತನು ಏಳುಸಾರಿ ಬಿದ್ದರೂ ಮತ್ತೆ ಏಳುವನು; ದುಷ್ಟನು ಕೇಡುಬಂದಾಗಲೆ ಕುಸಿದು ಬೀಳುವನು.</verse>
				<verse number="17">ನಿನ್ನ ಶತ್ರು ಬಿದ್ದರೆ ಹಿಗ್ಗಬೇಡ; ಎಡವಿದರೆ ಮನೋಲ್ಲಾಸ ಪಡಬೇಡ.</verse>
				<verse number="18">ಸರ್ವೇಶ್ವರ ನಿನ್ನ ಹರ್ಷವನ್ನು ಕಂಡು ಬೇಸರಗೊಂಡಾನು; ತನ್ನ ಕೋಪವನ್ನು ಅವನ ಕಡೆಯಿಂದ ತಿರುಗಿಸಿಬಿಟ್ಟಾನು.</verse>
				<verse number="19">ಕೆಡುಕರನ್ನು ಕಂಡು ಉರಿಗೊಳ್ಳಬೇಡ; ದುಷ್ಟರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ.</verse>
				<verse number="20">ಕೆಟ್ಟವನಿಗೆ ಶುಭಕಾಲ ಬಾರದು, ದುಷ್ಟರ ದೀಪ ಆರಿಹೋಗುವುದು.</verse>
				<verse number="21">ಮಗನೇ, ಸರ್ವೇಶ್ವರನಿಗೂ ರಾಜನಿಗೂ ಭಯಪಡು; ಅವರನ್ನು ವಿರೋಧಿಸುವವರ ಗೊಡವೆಗೆ ಹೋಗಬೇಡ.</verse>
				<verse number="22">ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸೀತು, ಅವರಿಂದಾಗುವ ನಾಶವು ಯಾರಿಗೆ ತಿಳಿದೀತು?</verse>
				<verse number="23">ಜ್ಞಾನಿಗಳ ಬೇರೆ ಕೆಲವು ಹೇಳಿಕೆಗಳು ಇವು: ನ್ಯಾಯವಿಚಾರಣೆಯಲ್ಲಿ ಪಕ್ಷಪಾತ ಸರಿಯಲ್ಲ.</verse>
				<verse number="24">ಅಪರಾಧಿಗೆ “ನೀನು ನಿರಪರಾಧಿ” ಎಂದು ತೀರ್ಪು ಕೊಡುವವನನ್ನು ಜನರು ಶಪಿಸುವರು, ಪ್ರಜೆಗಳು ದೂಷಿಸುವರು.</verse>
				<verse number="25">ತಪ್ಪುಮಾಡಿದವರನ್ನು ದಂಡಿಸುವವರಿಗೆ ಶುಭವಾಗುವುದು, ಸುಖಕರವಾದ ಆಶೀರ್ವಾದವು ಅವರಿಗೆ ಲಭಿಸುವುದು.</verse>
				<verse number="26">ಸತ್ಯವಾದ ಉತ್ತರ ತುಟಿಗೊಂದು ಚುಂಬನ.</verse>
				<verse number="27">ಕೆಲಸದ ಸಾಮಾನುಗಳನ್ನು ಆಣೆಮಾಡು, ಹೊಲಗದ್ದೆಗಳ ಕೆಲಸವನ್ನು ಮುಗಿಸು, ಆ ಬಳಿಕ ಮನೆ ಕಟ್ಟಲು ತೊಡಗು.</verse>
				<verse number="28">ನೆರೆಯವನಿಗೆ ವಿರುದ್ಧ ಆಧಾರವಿಲ್ಲದ ಸಾಕ್ಷಿಹೇಳಬೇಡ; ಮಾತಿನಲ್ಲಿ ಅವನಿಗೆ ಮೋಸಮಾಡಬೇಡ.</verse>
				<verse number="29">“ಅವನು ನನಗೆ ಮಾಡಿದಂತೆ ನಾನೂ ಅವನಿಗೆ ಮಾಡುವೆ, ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆ” ಎನ್ನಬೇಡ.</verse>
				<verse number="30">ಸೋಮಾರಿಯ ಹೊಲದ ಮೇಲೆ ನಡೆದುಹೋದೆ; ಮತಿಗೆಟ್ಟವನ ತೋಟದ ಮೇಲೆ ಹಾದುಹೋದೆ.</verse>
				<verse number="31">ಅವುಗಳಲ್ಲಿ ಮುಳ್ಳುಗಿಡಗಳು ಹರಡಿಕೊಂಡಿದ್ದವು, ಕಳೆಗಳು ಮುಚ್ಚಿಕೊಂಡಿದ್ದವು, ಕಲ್ಲಿನಗೋಡೆ ಹಾಳಾಗಿತ್ತು.</verse>
				<verse number="32">ಅದನ್ನು ನೋಡಿ ಚಿಂತಿಸತೊಡಗಿದೆ; ಆ ದೃಶ್ಯದಿಂದ ಈ ಪಾಠ ಕಲಿತೆ:</verse>
				<verse number="33">“ಇನ್ನೂ ಸ್ವಲ್ಪ ನಿದ್ರೆ, ಇನ್ನೂ ತುಸು ತೂಕಡಿಕೆ, ಕೈ ಮುದುಡಿಕೊಂಡು ಇನ್ನೂ ಕೊಂಚ ಮಲಗಿಕೊಳ್ಳುವೆ” ಎನ್ನುವೆಯಾ?</verse>
				<verse number="34">ಆಗ ಬಡತನ ಎರಗುವುದು ದಾರಿಗಳ್ಳನಂತೆ; ಕೊರತೆಯು ನಿನ್ನ ಮೇಲೆ ಬೀಳುವುದು ಪಂಜುಗಳ್ಳನಂತೆ.</verse>
			</chapter>
			<chapter number="25">
				<verse number="1">ಇವು ಕೂಡ ಸೊಲೊಮೋನನ ಜ್ಞಾನೋಕ್ತಿಗಳು. ಜುದೇಯದ ಅರಸ ಹಿಜ್ಕೀಯನ ಲೇಖಕರು ಸಂಗ್ರಹಿಸಿದ ನುಡಿಗಳು:</verse>
				<verse number="2">ವಿಷಯಗಳನ್ನು ರಹಸ್ಯವಾಗಿಡುವ ದೇವರಿಗೆ ಮಹಿಮೆ; ವಿಷಯಗಳನ್ನು ವಿಮರ್ಶಿಸುವ ರಾಜರಿಗೆ ಹಿರಿಮೆ.</verse>
				<verse number="3">ಆಕಾಶವು ಉನ್ನತ, ಭೂಮಿಯು ಅಗಾಧ, ಅಂತೆಯೇ ರಾಜರ ಮನಸ್ಸು ಅಗೋಚರ.</verse>
				<verse number="4">ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ ಅಕ್ಕಸಾಲಿಗನಿಗೆ ದಕ್ಕುವುದು ಚೊಕ್ಕ ಒಡವೆ.</verse>
				<verse number="5">ಅಂತೆಯೆ ರಾಜನ ಸನ್ನಿಧಾನದಿಂದ ದುಷ್ಟರನ್ನು ತೆಗೆದುಹಾಕಿದರೆ ಅವನ ರಾಜ್ಯಭಾರ ನೀತಿಯಾಧಾರದಿಂದ ಸುಸ್ಥಿರ.</verse>
				<verse number="6">ರಾಜನ ಸನ್ನಿಧಾನದಲ್ಲಿ ನಿನ್ನನ್ನೇ ಹೆಚ್ಚಿಸಿಕೊಳ್ಳಬೇಡ; ದೊಡ್ಡವರಿಗೆ ಏರ್ಪಡಿಸಿದ ಸ್ಥಾನದಲ್ಲಿ ನಿಂತುಕೊಳ್ಳಬೇಡ.</verse>
				<verse number="7">ಘನವಂತರ ಮುಂದೆ ಕೆಳಗಣ ಸ್ಥಾನಕ್ಕೆ ನೂಕಿಸಿಕೊಳ್ಳುವುದಕ್ಕಿಂತ “ಇನ್ನೂ ಮೇಲಕ್ಕೆ ಬಾ” ಎಂದು ಕರೆಸಿಕೊಳ್ಳುವುದು ಲೇಸು.</verse>
				<verse number="8">ದುಡುಕಿ ನೆರೆಯವನ ಮೇಲೆ ವ್ಯಾಜ್ಯಕ್ಕೆ ಓಡಬೇಡ; ಕಡೆಗೆ ಅವನು ನಿನ್ನ ಮಾನಕಳೆದಾಗ ಏನು ಮಾಡುವೆ, ಯೋಚಿಸು.</verse>
				<verse number="9">ವ್ಯಾಜ್ಯವನ್ನು ನೆರೆಯವನ ಸಂಗಡವೆ ಚರ್ಚಿಸಿ ತೀರ್ಮಾನಿಸಿಕೊ; ನೆರೆಹೊರೆಯವರ ಗುಟ್ಟನ್ನು ಬಯಲು ಮಾಡಬೇಡ.</verse>
				<verse number="10">ಬಯಲು ಮಾಡಿದರೆ ಕೇಳುವವನು ನಿನ್ನನ್ನೆ ಅವಮಾನಗೊಳಿಸಾನು, ನಿನಗೆ ಬರುವ ಅಪಕೀರ್ತಿ ಅಳಿಯದೆ ಉಳಿದೀತು.</verse>
				<verse number="11">ಸಮಯೋಚಿತ ಮಾತು ಬೆಳ್ಳಿ ತಟ್ಟೆಯಲ್ಲಿ ಖಚಿತವಾದ ಬಂಗಾರದ ಹಣ್ಣು.</verse>
				<verse number="12">ಕೇಳುವ ಕಿವಿಗೆ ಕೊಡುವ ಬುದ್ಧಿವಾದವು ಹೊನ್ನಿನ ಮುರುವು, ಅಪರಂಜಿಯ ಆಭರಣವು.</verse>
				<verse number="13">ಸುಗ್ಗಿಯ ಕಾಲದಲ್ಲಿ ಹಿಮದ ತಂಪು ಹೇಗೋ ಹಾಗೆ ಕಳುಹಿಸುವ ಒಡೆಯನಿಗೆ ಪ್ರಾಮಾಣಿಕ ದೂತನೂ ಹಾಗೆ.</verse>
				<verse number="14">ಗಾಳಿಯಿದೆ, ಮೋಡವಿದೆ, ಆದರೆ ಮಳೆಯಿಲ್ಲ; ಕೊಡದೆಯೆ ತಾನೊಬ್ಬ ದಾನಿಯೆಂದು ಕೊಚ್ಚಿಕೊಳ್ಳುವವನೂ ಹಾಗೆಯೆ.</verse>
				<verse number="15">ಸಹನಶೀಲತೆಯಿಂದ ಅರಸನನ್ನೂ ಒಲಿಸಿಕೊಳ್ಳಬಹುದು; ಮೃದುವಾದ ನಾಲಿಗೆ ಎಲುಬನ್ನೂ ಮುರಿಯಬಲ್ಲದು.</verse>
				<verse number="16">ಜೇನು ಸಿಕ್ಕಿದರೆ ಅಳತೆಯಿಂದ ತಿನ್ನು, ಮಿತಿಮೀರಿದರೆ ವಾಂತಿಯಾದೀತು.</verse>
				<verse number="17">ಪದೇ ಪದೇ ನೆರೆಯವನ ಮನೆಗೆ ಹೋಗಬೇಡ, ಬೇಸರಗೊಂಡು ನಿನ್ನನ್ನು ಹಗೆಮಾಡಾನು.</verse>
				<verse number="18">ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳುವವನು ಕೊಡತಿಗೆ, ಕತ್ತಿಗೆ, ಹರಿತವಾದ ಬಾಣಕ್ಕೆ ಸಮಾನನು.</verse>
				<verse number="19">ಕಷ್ಟಕಾಲದಲ್ಲಿ ಕಪಟಿಯನ್ನು ನಂಬುವುದು, ಮುರುಕು ಹಲ್ಲನ್ನು ಕುಂಟಕಾಲನ್ನು ನಂಬಿದಂತಾಗುವುದು.</verse>
				<verse number="20">ಮನಗುಂದಿದವನಿಗೆ ಸಂಗೀತ ಹಾಡುವುದೆಂದರೆ ಚಳಿಯಲ್ಲಿ ಬಟ್ಟೆ ಬಿಚ್ಚಿದ ಹಾಗೆ, ಉರಿಗಾಯಕ್ಕೆ ಉಪ್ಪು ಹಚ್ಚಿದಂತೆ.</verse>
				<verse number="21">ಹಗೆಯವನು ಹಸಿದಿದ್ದರೆ ಅನ್ನ ನೀಡು, ಬಾಯಾರಿದ್ದರೆ ಕುಡಿಯಲು ಕೊಡು.</verse>
				<verse number="22">ಹೀಗೆ ಅವನ ತಲೆಯ ಮೇಲೆ ಉರಿಕೆಂಡ ಸುರಿವೆ; ಸರ್ವೇಶ್ವರನಿಂದಲೂ ಪ್ರತಿಫಲ ಪಡೆಯುವೆ.</verse>
				<verse number="23">ಮಳೆ ಬರುವುದು ಪಡುವಣ ಗಾಳಿಯಿಂದ; ಮುಖಕ್ಕೆ ಸಿಟ್ಟು ಬರುವುದು ಚಾಡಿ ನಾಲಿಗೆಯಿಂದ.</verse>
				<verse number="24">ಜಗಳಗಂಟಿಯೊಡನೆ ಮಹಡಿ ಮನೆಯಲ್ಲಿರುವುದಕ್ಕಿಂತ ಗುಡಿಸಿಲಿನ ಮೂಲೆಯಲ್ಲಿ ಒಂಟಿಯಾಗಿ ವಾಸಿಸುವುದು ಲೇಸು.</verse>
				<verse number="25">ದೂರನಾಡಿನಿಂದ ಬಂದ ಶುಭವರದಿ, ದಣಿದ ಪ್ರಾಣಕ್ಕೆ ತಣ್ಣೀರ ತೃಪ್ತಿ.</verse>
				<verse number="26">ದುಷ್ಟರಿಗೆ ಬಿಟ್ಟುಕೊಡುವ ನೀತಿವಂತ ಕೆಸರಿನ ಬುಗ್ಗೆಗೆ, ಕೊಳಕು ಚಿಲುಮೆಗೆ ಸಮಾನ.</verse>
				<verse number="27">ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ, ಗೌರವದ ಮೇಲೆ ಗೌರವ ಬಯಸುವುದು ಸರಿಯಲ್ಲ.</verse>
				<verse number="28">ಆತ್ಮಸ್ವಾಧೀನವಲ್ಲದ ಮನುಷ್ಯ ಗೋಡೆಬಿದ್ದು ಕಾವಲಿಲ್ಲದ ಹಾಳೂರು.</verse>
			</chapter>
			<chapter number="26">
				<verse number="1">ಬೇಸಿಗೆಯಲ್ಲಿ ಮಂಜು ಬೀಳುತ್ತದೆಯೇ? ಸುಗ್ಗಿಯಲ್ಲಿ ಮಳೆ ಬರುತ್ತದೆಯೇ? ಹಾಗೆಯೆ ಬುದ್ಧಿಹೀನನಿಗೆ ತೋರುವ ಮಾನಮರ್ಯಾದೆ.</verse>
				<verse number="2">ಕುಪ್ಪಳಿಸುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯಂತೆ, ಕಾರಣವಿಲ್ಲದೆ ಕೊಟ್ಟ ಶಾಪ ಗಾಳಿ ಪಾಲಾಗುತ್ತದೆ.</verse>
				<verse number="3">ಕುದುರೆಗೆ ಚಬುಕು, ಕತ್ತೆಗೆ ಕಡಿವಾಣ, ಮೂಢನಿಗಾದರೊ ಬೆನ್ನಿಗೆ ಬೆತ್ತ.</verse>
				<verse number="4">ಮೂಢನ ಪ್ರಶ್ನೆಗೆ ಉತ್ತರಕೊಡಬೇಡ; ಮೂರ್ಖನಂತೆ ಕೊಟ್ಟರೆ ನೀನೂ ಆದಿಯೇ ಅವನಂತೆ.</verse>
				<verse number="5">ಮೂಢನಿಗೆ ಅವನ ಮೂರ್ಖತನ ತಿಳಿಯುವಂತೆ ಉತ್ತರಕೊಡು; ಇಲ್ಲವಾದರೆ ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.</verse>
				<verse number="6">ಮೂಢನನ್ನು ದೂತನನ್ನಾಗಿ ಕಳುಹಿಸುವವನು ತನ್ನ ಕಾಲನ್ನು ತಾನೆ ಕಡಿದುಕೊಳ್ಳುವನು, ತನ್ನ ಕೇಡನ್ನು ತಾನೆ ಕುಡಿಯುವನು.</verse>
				<verse number="7">ತುಂಟ ಆಡುವ ಜ್ಞಾನೋಕ್ತಿಯು ಕುಂಟಕಾಲಿನ ಜೋಲಾಟವು.</verse>
				<verse number="8">ಮೂಢನಿಗೆ ಕೊಡುವ ಮಾನ ಕವಣೆಗೆ ಕಟ್ಟಿದ ಕಲ್ಲು.</verse>
				<verse number="9">ಮೂಢನ ಬಾಯಿಗೆ ಸಿಕ್ಕಿದ ಜ್ಞಾನೋಕ್ತಿಯು ಕುಡುಕನ ಕೈಗೆ ಸಿಕ್ಕಿದ ಮುಳ್ಳುಗೋಲು.</verse>
				<verse number="10">ಮೂಢರನ್ನೂ ದಾರಿಹೋಕರನ್ನೂ ಕೂಲಿಗೆ ಕರೆಯುವವನು ಯಾರಿಗಾದರೂ ತಗಲಲಿ ಎಂದು ಬಾಣ ಎಸೆಯುವವನಿಗೆ ಸಮಾನ.</verse>
				<verse number="11">ನಾಯಿ ತಾನು ಕಕ್ಕಿದ್ದನ್ನು ನೆಕ್ಕಲು ತಿರುಗಿ ಬರುವುದು; ಮೂಢನು ತಾನು ಮಾಡಿದ ಮೂರ್ಖತನಕ್ಕೆ ಹಿಂದಿರುಗುವನು.</verse>
				<verse number="12">ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವವನನ್ನು ನೋಡು; ಅಂಥವನಿಗಿಂತ ಮೂಢನ ಸುಧಾರಣೆ ಹೆಚ್ಚು ಸಾಧ್ಯ.</verse>
				<verse number="13">“ಬೀದಿಯಲ್ಲಿದೆ, ಹೊರಗೆ ಓಡಾಡುತ್ತಿದೆ ಸಿಂಹ\, ಇದು ಮೈಗಳ್ಳನ ಪಿಳ್ಳೆಯ ನೆವ.</verse>
				<verse number="14">ಕೀಲುಗುಣಿಯಲ್ಲಿ ಬಾಗಿಲು ತಿರುಗುವಂತೆ ಸುತ್ತಾಡುತ್ತಾನೆ ಸೋಮಾರಿ ಹಾಸಿಗೆಯಲ್ಲೆ.</verse>
				<verse number="15">ಮೈಗಳ್ಳ ಕೈಹಾಕುತ್ತಾನೆ ತುತ್ತಿಗೆ, ಅದನ್ನು ಬಾಯಿಗೆ ಎತ್ತಲಾರದಷ್ಟು ಆಯಾಸ ಅವನಿಗೆ.</verse>
				<verse number="16">ವಿವೇಕದಿಂದ ಉತ್ತರಿಸಬಲ್ಲ ಏಳು ಬುದ್ಧಿವಂತರಿಗಿಂತ ತಾನೇ ಜ್ಞಾನಿ ಎಂದುಕೊಳ್ಳುತ್ತಾನೆ ಸೋಮಾರಿ.</verse>
				<verse number="17">ಬೇರೆಯವರ ವ್ಯಾಜ್ಯದಲ್ಲಿ ತಲೆಹಾಕುವವನು ಬೀದಿ ನಾಯಿಯ ಬಾಲ ಎಳೆದ ದಾರಿಹೋಕನಿಗೆ ಸಮಾನನು.</verse>
				<verse number="18">ನೆರೆಯವನನ್ನು ಮೋಸಗೊಳಿಸಿ “ತಮಾಷೆಗಾಗಿ ಮಾಡಿದೆ” ಎನ್ನುವನವನು</verse>
				<verse number="19">ಬೆಂಕಿಕೊಳ್ಳಿಗಳನ್ನೂ ಕೊಲ್ಲುವ ಬಾಣಗಳನ್ನೂ ಬೀರುವ ದೊಡ್ಡ ಹುಚ್ಚನಿಗೆ ಸಮಾನನು.</verse>
				<verse number="20">ಸೌದೆಯಿಲ್ಲದಿದ್ದರೆ ಬೆಂಕಿ ಆರುವುದು; ಚಾಡಿಕೋರನಿಲ್ಲದಿದ್ದರೆ ಜಗಳ ಶಮನವಾಗುವುದು.</verse>
				<verse number="21">ಕೆಂಡಕ್ಕೆ ಇದ್ದಲುಬೇಕು, ಬೆಂಕಿಗೆ ಸೌದೆ ಬೇಕು; ವ್ಯಾಜ್ಯ ಕೆರಳಿಸಲು ಜಗಳಗಂಟಿ ಇರಲೇಬೇಕು.</verse>
				<verse number="22">ಚಾಡಿಕೋರನ ಮಾತು ರುಚಿಕರವಾದ ತುತ್ತು; ಹೊಟ್ಟೆಯೊಳಕ್ಕೆ ಗುಳುಕ್ಕನೆ ಇಳಿಯುತ್ತದೆ ಅದು.</verse>
				<verse number="23">ಕೆಟ್ಟ ಹೃದಯದಿಂದ ಸವಿನುಡಿಯು ತುಟಿ, ಬೆಳ್ಳಿ ಮೆರುಗಿನಿಂದ ಥಳಿಸುವ ಮಣ್ಣಿನ ಬೋಕಿ.</verse>
				<verse number="24">ಹಗೆಗಾರನ ತುಟಿಯಲ್ಲಿ ಸ್ನೇಹಭಾವದ ನಟನೆ; ಹೊಟ್ಟೆಯಲ್ಲಾದರೊ ಹುದುಗಿದೆ ವಂಚನೆ.</verse>
				<verse number="25">ಹಗೆಗಾರ ಸವಿನುಡಿದರೂ ನಂಬಬೇಡ; ಹೃದಯದಲ್ಲಿದೆ ಏಳ್ಮಡಿ ಹೇಯ ಕೃತ್ಯ.</verse>
				<verse number="26">ಹಗೆಯನ್ನು ವಂಚನೆಯಿಂದ ಮರೆಮಾಚಿದ್ದರೂ ಸಭೆಯಲ್ಲಿ ಕೆಟ್ಟತನ ಬಟ್ಟಬಯಲಾಗದಿರದು.</verse>
				<verse number="27">ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುವನು; ಹೊರಳಿಸುವವನ ಮೇಲೆಯೆ ಗುಂಡು ಹೊರಳುವುದು.</verse>
				<verse number="28">ಸುಳ್ಳುನಾಲಿಗೆ ಹಗೆಮಾಡುತ್ತದೆ ಸತ್ಯವನ್ನು; ಹೊಗಳುಭಟ್ಟನ ಬಾಯಿ ತರುತ್ತದೆ ನಷ್ಟವನ್ನು.</verse>
			</chapter>
			<chapter number="27">
				<verse number="1">ನಾಳೆ ಕುರಿತು ಕೊಚ್ಚಿಕೊಳ್ಳಬೇಡ; ಇಂದು ಒದಗಲಿರುವುದೇ ನಿನಗೆ ತಿಳಿದಿಲ್ಲ.</verse>
				<verse number="2">ನಿನ್ನ ಬಾಯಿ ಅಲ್ಲ, ಬೇರೆಯವರು ಹೊಗಳಲಿ ನಿನ್ನ; ಆತ್ಮಸ್ತುತಿ ಸಲ್ಲ, ಅನ್ಯರು ಸ್ತುತಿಸಲಿ ನಿನ್ನ.</verse>
				<verse number="3">ಕಲ್ಲು ಭಾರ, ಮರಳು ಭಾರ, ಮೂಢನ ರೇಗಾಟ ಇವೆರಡಕ್ಕೂ ಬಲುಭಾರ.</verse>
				<verse number="4">ಕೋಪವು ಕ್ರೂರ, ಕ್ರೋಧವು ಪ್ರವಾಹ, ಮತ್ಸರದ ಮುಂದೆ ನಿಲ್ಲಬಲ್ಲವರಾರು?</verse>
				<verse number="5">ಮರೆಯಾದ ಪ್ರೀತಿಗಿಂತ ಬಹಿರಂಗವಾದ ಗದರಿಕೆ ಲೇಸು.</verse>
				<verse number="6">ಮಿತ್ರನು ಕೊಡುವ ಗುದ್ದು ಹಿತಕರ; ಶತ್ರುವು ಕೊಡುವ ಮುದ್ದು ಮೋಸಕರ.</verse>
				<verse number="7">ಹೊಟ್ಟೆ ತುಂಬಿದವನಿಗೆ ಜೇನುಕೊಟ್ಟರೂ ಕಹಿ; ಹೊಟ್ಟೆ ಹಸಿದವನಿಗೆ ಏನು ಕೊಟ್ಟರು ಸಿಹಿ.</verse>
				<verse number="8">ಮನೆಬಿಟ್ಟು ಅಲೆಯುವ ವ್ಯಕ್ತಿ, ಗೂಡುಬಿಟ್ಟು ಅಲೆಯುವ ಹಕ್ಕಿ.</verse>
				<verse number="9">ತೈಲ, ಸುಗಂಧ ದ್ರವ್ಯಗಳು ಮನೋಹರ, ಮಿತ್ರನ ಆದರಣೆ, ಸಲಹೆ ಅತಿ ಮಧುರ.</verse>
				<verse number="10">ನಿನಗೂ ನಿನ್ನ ಹೆತ್ತವನಿಗೂ ಮಿತ್ರನಾದವನನ್ನು ಬಿಡಬೇಡ; ಇಕ್ಕಟ್ಟಿನ ದಿನದಲ್ಲಿ ಒಡಹುಟ್ಟಿದವರನ್ನು ಆಶ್ರಯಿಸಬೇಡ; ದೂರವಿರುವ ಅಣ್ಣನಿಗಿಂತ ಹತ್ತಿರವಿರುವ ನೆರೆಯವನೆ ಲೇಸು.</verse>
				<verse number="11">ಮಗನೇ, ಜ್ಞಾನಗಳಿಸಿ ನನ್ನ ಮನಸ್ಸನ್ನು ಸಂತೋಷಪಡಿಸು; ಆಗ ನನ್ನ ನಿಂದಕರಿಗೆ ಸರಿಯಾದ ಉತ್ತರ ಸಿಕ್ಕುವುದು.</verse>
				<verse number="12">ಜಾಣ ಕೇಡನ್ನು ಕಂಡು ಅಡಗಿಕೊಳ್ಳುತ್ತಾನೆ; ಕೋಣ ಮುನ್ನುಗ್ಗಿ ಹಾನಿಗೆ ಈಡಾಗುತ್ತಾನೆ.</verse>
				<verse number="13">ಅಪರಿಚಿತನಿಗೆ ಹೊಣೆಯಾದವನ ಬಟ್ಟೆ ಕಿತ್ತುಕೊ; ಅಪರಿಚಿತಳಿಗೆ ಹೊಣೆ ನಿಲ್ಲುವವನನ್ನೆ ಒತ್ತೆ ಇಟ್ಟುಕೊ.</verse>
				<verse number="14">ಮುಂಜಾನೆಯೆ ಅಬ್ಬರದಿಂದ ನೆರೆಯವನನ್ನು ಎಬ್ಬಿಸಿ ಮಾಡುವ ಆಶೀರ್ವಾದ, ಶಾಪವೆಂದೇ ಪರಿಗಣಿಸಲ್ಪಡುವುದು.</verse>
				<verse number="15">ತಂಟೆ ಮಾಡುವ ಹೆಂಡತಿ ತಟತಟನೆ ತೊಟ್ಟಿಕ್ಕುವ ಹನಿ.</verse>
				<verse number="16">ಅಂಥವಳನ್ನು ಅಡಗಿಸಬಲ್ಲವನು ಗಾಳಿಯನ್ನು ಅಡಗಿಸಬಲ್ಲ, ಕೈ ಎಣ್ಣೆಜಿಡ್ಡನ್ನೂ ಬಿಗಿಹಿಡಿಯಬಲ್ಲ.</verse>
				<verse number="17">ಕಬ್ಬಿಣ ಕಬ್ಬಿಣವನ್ನು ಹರಿತ ಮಾಡುವಂತೆ ಮಿತ್ರನು ಮಿತ್ರನ ಬುದ್ಧಿಯನ್ನು ಹರಿತಮಾಡಬಲ್ಲ.</verse>
				<verse number="18">ಅಂಜೂರವನ್ನು ಕಾಯುವವನು ಅದರ ಹಣ್ಣನ್ನು ತಿನ್ನುವನು; ಯಜಮಾನನನ್ನು ಕಾಯುವವನು ಸನ್ಮಾನವನ್ನು ಸವಿಯುವನು.</verse>
				<verse number="19">ನೀರು ಮುಖಕ್ಕೆ ಮುಖವನ್ನು ಪ್ರತಿಬಿಂಬಿಸುತ್ತದೆ; ಹೃದಯ ಮನುಷ್ಯನಿಗೆ ಮನುಷ್ಯನನ್ನು ತೋರ್ಪಡಿಸುತ್ತದೆ.</verse>
				<verse number="20">ನರಕ ಪಾತಾಳಗಳಿಗೆ ತೃಪ್ತಿಯೇ ಇಲ್ಲ; ಮನುಷ್ಯನ ಕಣ್ಣುಗಳಿಗೂ ತೃಪ್ತಿಯಿಲ್ಲ.</verse>
				<verse number="21">ಬೆಳ್ಳಿಬಂಗಾರಗಳಿಗೆ ಪುಟಕುಲುಮೆಗಳಿಂದ ಶೋಧನೆ; ಮನುಷ್ಯನಿಗೆ ತನ್ನ ಸ್ತುತಿಕೀರ್ತಿಯಿಂದ ಪರಿಶೋಧನೆ.</verse>
				<verse number="22">ಮೂರ್ಖನನ್ನು ಕಾಳಿನ ಸಂಗಡ ಒರಳಿಗೆ ಹಾಕಿ ಒನಕೆಯಿಂದ ಕುಟ್ಟಿದರೂ ಮೂರ್ಖತನ ತೊಲಗದು.</verse>
				<verse number="23">ನಿನ್ನ ಹಿಂಡುಗಳ ಪರಿಸ್ಥಿತಿಯನ್ನು ತಿಳಿದುಕೊ; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೊ.</verse>
				<verse number="24">ಸಿರಿಸಂಪತ್ತು ಶಾಶ್ವತವಲ್ಲ; ಕಿರೀಟ ತಲತಲಾಂತರಕ್ಕೂ ಇರುವುದಿಲ್ಲ.</verse>
				<verse number="25">ಹುಲ್ಲು ಕೊಯ್ದು ತಂದಮೇಲೆ, ಗುಡ್ಡದ ಸೊಪ್ಪು ಕೂಡಿಸಿಟ್ಟ ಮೇಲೆ, ಹಸಿ ಹುಲ್ಲು ಚಿಗುರುತ್ತದೆ.</verse>
				<verse number="26">ಕುರಿಗಳಿಂದ ನಿನ್ನ ಬಟ್ಟೆಬರೆ; ಆಡುಗಳಿಂದ ನಿನ್ನ ಹೊಲಗದ್ದೆ.</verse>
				<verse number="27">ನಿನ್ನ, ನಿನ್ನ ಮನೆಯವರ ಊಟ ತಿಂಡಿಗೆ, ನಿನ್ನ ದಾಸಿಯರ ಜೀವನಕ್ಕೆ ಮೇಕೆಗಳ ಹಾಲೇ ಸಾಕು.</verse>
			</chapter>
			<chapter number="28">
				<verse number="1">ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು; ಸತ್ಯಸಂಧನು ಸಿಂಹದಂತೆ ಧೈರ್ಯದಿಂದಿರುವನು.</verse>
				<verse number="2">ಅರಾಜಕತೆಯಿಂದ ನಾಡಿನಲ್ಲಿ ನಾಯಕರನೇಕರು ತಲೆಯೆತ್ತುವರು; ಜ್ಞಾನ ಹಾಗೂ ವಿವೇಕದಿಂದ ನಾಡು ಸುಸ್ಥಿರವಾಗುವುದು.</verse>
				<verse number="3">ದಲಿತರನ್ನೇ ಹಿಂಸಿಸುವ ಬಡವ, ಕಾಳೂ ಉಳಿಯದಂತೆ ಜಡಿಯುವ ಮಳೆಗೆ ಸಮಾನ.</verse>
				<verse number="4">ಧರ್ಮಶಾಸ್ತ್ರವನ್ನು ಕೈಗೊಳ್ಳದವರು ದುಷ್ಟರನ್ನು ಹೊಗಳುವರು; ಕೈಗೊಳ್ಳುವವರು ಅವರ ವಿರುದ್ಧ ಹೋರಾಡುವರು.</verse>
				<verse number="5">ಕೆಟ್ಟವರು ನ್ಯಾಯ ನೀತಿಯನ್ನು ಗ್ರಹಿಸರು; ಸರ್ವೇಶ್ವರನ ಭಕ್ತರು ಅದನ್ನು ಪೂರ್ತಿಯಾಗಿ ಗ್ರಹಿಸುವರು.</verse>
				<verse number="6">ದುರ್ಮಾರ್ಗಿಯಾದ ಧನವಂತನಿಗಿಂತ ನಿರ್ದೋಷಿಯಾಗಿ ನಡೆವ ದರಿದ್ರನೇ ಲೇಸು.</verse>
				<verse number="7">ಜ್ಞಾನಿಯಾದ ಮಗ ಧರ್ಮಶಾಸ್ತ್ರವನ್ನು ಕೈಗೊಳ್ಳುವನು; ಹೊಟ್ಟೆಬಾಕರ ಗೆಳೆಯ ತಂದೆಗೆ ಅಪಕೀರ್ತಿ ತರುವನು.</verse>
				<verse number="8">ಬಡ್ಡಿಬಾಕಿಗಳಿಂದ ಬೆಳೆದ ಆಸ್ತಿ, ಬಡವರಲ್ಲಿ ಕನಿಕರವುಳ್ಳವನಿಗೆ ನಿಧಿ.</verse>
				<verse number="9">ಧರ್ಮಶಾಸ್ತ್ರಕ್ಕೆ ಕಿವಿಮುಚ್ಚಿಕೊಳ್ಳುವವನ ಪ್ರಾರ್ಥನೆ, ದೇವರಿಂದ ತಿರಸ್ಕೃತವಾದ ಪ್ರಾರ್ಥನೆ.</verse>
				<verse number="10">ನೆಟ್ಟಗೆ ನಡೆವವರನ್ನು ಕೆಟ್ಟದಾರಿಗೆ ಎಳೆಯುವವನು ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು; ನಿರ್ದೋಷಿಗಳು ಸುಖಸಂತೋಷಕ್ಕೆ ಬಾಧ್ಯಸ್ಥರು.</verse>
				<verse number="11">ಹಣವಂತ ತಾನೇ ಜ್ಞಾನಿಯೆಂದು ಎಣಿಸಿಕೊಳ್ಳುವನು; ವಿವೇಕಿಯಾದ ಬಡವ ಅವನೆಂಥವನೆಂದು ಅರ್ಥಮಾಡಿಕೊಳ್ಳುವನು.</verse>
				<verse number="12">ಸತ್ಯಸಂಧರಿಗೆ ಜಯವಾದರೆ ಸಂಭ್ರಮ ಸಡಗರ; ದುಷ್ಟರನ್ನು ಉನ್ನತಿಗೇರಿಸಿದರೆ ಬೇರೆಯವರು ಮರೆಯಾಗುವರು.</verse>
				<verse number="13">ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.</verse>
				<verse number="14">ಭಯದಿಂದ ನಡೆದುಕೊಳ್ಳುವವನು ಭಾಗ್ಯವಂತನು; ಕಠಿಣ ಹೃದಯನು ಕೇಡಿಗೆ ತುತ್ತಾಗುವನು.</verse>
				<verse number="15">ದಲಿತರನ್ನಾಳುವ ದುರುಳರಾಜ ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.</verse>
				<verse number="16">ವಿವೇಕಶೂನ್ಯನಾದ ಒಡೆಯ ಮಹಾಹಿಂಸಕ; ದುರ್ಲಾಭವನ್ನು ವಿರೋಧಿಸುವವನಿಗೆ ದೀರ್ಘಾಯುಷ್ಯ.</verse>
				<verse number="17">ನರಹತ್ಯಮಾಡಿದ ಪಾಪಾತ್ಮನು ಪಾತಾಳದತ್ತ ಓಡೋಡುತ್ತಿರುವನು; ಅವನನ್ನು ಯಾರೂ ತಡೆಯಬಾರದು.</verse>
				<verse number="18">ಸನ್ಮಾರ್ಗಿಗಳಿಗೆ ಸಂರಕ್ಷಣೆ, ದುರ್ಮಾರ್ಗಿಗಳಿಗೆ ಪತನ ತಟ್ಟನೆ.</verse>
				<verse number="19">ದುಡಿದು ಹೊಲ ಗೇಯುವವನಿಗೆ ಹೊಟ್ಟೆ ತುಂಬ ಅನ್ನ; ವ್ಯರ್ಥಕಾರ್ಯಗಳಲ್ಲಿ ಆಸಕ್ತನಾದವನಿಗೆ ಬೇಕಾದಷ್ಟು ಬಡತನ.</verse>
				<verse number="20">ಪ್ರಾಮಾಣಿಕನಿಗೆ ಪೂರ್ಣಾಶೀರ್ವಾದ; ಹಣವಂತನಾಗಲು ಹಾತೊರೆಯುವವನು ಶಿಕ್ಷಾರ್ಹ.</verse>
				<verse number="21">ಪಕ್ಷಪಾತ ತಕ್ಕುದಲ್ಲ; ತುತ್ತನ್ನಕ್ಕಾಗಿ ತಪ್ಪುಮಾಡುವವರುಂಟು.</verse>
				<verse number="22">ಆಸ್ತಿ ಗಳಿಸಲು ಲೋಭಿಗೆ ಆತುರ; ತನಗೆ ಕೊರತೆ ಕಾದಿದೆಯೆಂದು ಆತ ಅರಿಯ.</verse>
				<verse number="23">ಮುಖಸ್ತುತಿ ಮಾಡುವವನಿಗಿಂತ ಗದರಿಸುವವನೇ ಕೊನೆಗೆ ಹೆಚ್ಚು ದಯಾವಂತ.</verse>
				<verse number="24">“ಅದು ತಪ್ಪಲ್ಲ” ಎಂದು ಹೆತ್ತವರ ಆಸ್ತಿಯನ್ನು ಕದಿಯುವವನು ಕೊಳ್ಳೆ ಹೊಡೆಯುವವರ ಸಂಗಡಿಗನು.</verse>
				<verse number="25">ಅತ್ಯಾಸೆಪಡುವವನು ಜಗಳವೆಬ್ಬಿಸುವನು; ಸರ್ವೇಶ್ವರನಲ್ಲಿ ಭರವಸೆಯಿಟ್ಟವನು ಬಲಿಷ್ಠನು.</verse>
				<verse number="26">ತನ್ನ ಶಕ್ತಿಯಲ್ಲೆ ಭರವಸೆ ಇಡುವವನು ಮೂಢನು; ಜ್ಞಾನಿಗಳ ಮಾರ್ಗದಲ್ಲಿ ನಡೆವವನು ವಿಮುಕ್ತನಾಗುವನು.</verse>
				<verse number="27">ಬಡವರಿಗೆ ಕೊಡುವವನು ಕೊರತೆಪಡನು; ಅವರನ್ನು ಕಂಡೂ ಕಾಣದಂತೆ ಇರುವವನು ಬಹುಶಾಪಗ್ರಸ್ಥನು.</verse>
				<verse number="28">ದುಷ್ಟರು ಪ್ರಬಲವಾದರೆ ಜನರು ತಲೆಮರೆಸಿಕೊಳ್ಳುವರು; ದುಷ್ಟರು ನಾಶವಾದರೆ ಶಿಷ್ಟರು ವೃದ್ಧಿಯಾಗುವರು.</verse>
			</chapter>
			<chapter number="29">
				<verse number="1">ಎಷ್ಟು ಗದರಿಸಿದರೂ ತಗ್ಗದ ಹಟಮಾರಿ ಫಕ್ಕನೆ ಬೀಳುವನು, ಮತ್ತೆ ಏಳನು.</verse>
				<verse number="2">ಸಜ್ಜನರ ಅಧಿಕಾರದಿಂದ ಜನರಿಗೆ ನಲಿದಾಟ; ದುರ್ಜನರ ಆಳ್ವಿಕೆಯಿಂದ ಜನರಿಗೆ ನರಳಾಟ.</verse>
				<verse number="3">ಜ್ಞಾನಪ್ರಿಯ ಮಗನಿಂದ ತಂದೆಗೆ ಸಂತೋಷ; ವೇಶ್ಯೆಯರ ಸಂಗದಿಂದ ಆಸ್ತಿ ವಿನಾಶ.</verse>
				<verse number="4">ನ್ಯಾಯಪಾಲಕ ರಾಜನಿಂದ ನಾಡಿನ ಅಭಿವೃದ್ಧಿ; ಲಂಚಕೋರ ಅರಸನಿಂದ ದೇಶ ಹಿಡಿವುದು ವಿನಾಶದ ಹಾದಿ.</verse>
				<verse number="5">ನೆರೆಯವನನ್ನು ಅಳತೆಮೀರಿ ಹೊಗಳುವವನು ಅವನ ಕಾಲಿಗೆ ಬಲೆಯನ್ನು ಒಡ್ಡುವನು.</verse>
				<verse number="6">ಕೆಟ್ಟವನು ತನ್ನ ಪಾಪಪಾಶದಲ್ಲೆ ಸಿಕ್ಕಿಬೀಳುವನು; ಒಳ್ಳೆಯವನು ಉಲ್ಲಾಸದಿಂದ ಹಾಡಿ ಹರ್ಷಿಸುವನು.</verse>
				<verse number="7">ನೀತಿವಂತನು ದಲಿತರ ಹಕ್ಕುಬಾಧ್ಯತೆಯನ್ನು ಕಾದಿರಿಸುವನು; ದುಷ್ಟರಿಗಿಲ್ಲ ಅದನ್ನು ಗ್ರಹಿಸುವಷ್ಟು ಅಕ್ಕರೆ.</verse>
				<verse number="8">ಕುಚೋದ್ಯರು ಪಟ್ಟಣಕ್ಕೆ ಬೆಂಕಿ ಹಚ್ಚುವರು; ಜ್ಞಾನಿಗಳೊ ರೋಷಾಗ್ನಿಯನ್ನು ಆರಿಸುವರು.</verse>
				<verse number="9">ಮೂರ್ಖನ ಸಂಗಡ ಜ್ಞಾನಿ ತರ್ಕಮಾಡಿದ್ದೆ ಆದರೆ ಆ ಮೂರ್ಖ ರೇಗಬಹುದು, ನಗಬಹುದು, ತರ್ಕಮಾತ್ರ ಮುಗಿಯದು.</verse>
				<verse number="10">ಕೊಲೆಪಾತಕರು ನೀತಿವಂತನನ್ನು ದ್ವೇಷಿಸುವರು; ಅಂಥವನ ಪ್ರಾಣಕ್ಕೂ ಹೊಂಚುಹಾಕುವರು.</verse>
				<verse number="11">ಮೂಢನು ತನ್ನ ಕೋಪವನ್ನೆಲ್ಲ ವ್ಯಕ್ತಪಡಿಸುವನು; ಜ್ಞಾನಿ ತನ್ನ ಕೋಪವನ್ನು ತಡೆಹಿಡಿದು ಶಮನಗೊಳ್ಳುವನು.</verse>
				<verse number="12">ಸುಳ್ಳುವರದಿಗೆ ಕಿವಿಗೊಡುವ ರಾಜಸೇವಕರೆಲ್ಲರು ದುರುಳರು.</verse>
				<verse number="13">ದಲಿತನೂ, ದಬ್ಬಾಳಿಕೆ ನಡೆಸುವವನೂ ಸ್ಥಿತಿಯಲ್ಲಿ ಎದುರುಬದುರು; ಆದರೆ ಸರ್ವೇಶ್ವರನೆ ಅವರಿಬ್ಬರ ಕಣ್ಣುಗಳನ್ನು ಬೆಳಗಿಸುವವನು.</verse>
				<verse number="14">ಬಡಬಗ್ಗರನ್ನು ನ್ಯಾಯವಾಗಿ ಆಳುವ ಅರಸನ ಸಿಂಹಾಸನ ಸದಾ ಸುಭದ್ರ.</verse>
				<verse number="15">ಬೆತ್ತ ಬೆದರಿಕೆಗಳು ಜ್ಞಾನ ತರುತ್ತವೆ; ಶಿಕ್ಷಿಸದೆ ಬಿಟ್ಟ ಮಗನು ತಾಯಿಗೆ ತರುತ್ತಾನೆ ಅಪಕೀರ್ತಿ.</verse>
				<verse number="16">ದುಷ್ಟರ ವೃದ್ಧಿ ಪಾಪಾಭಿವೃದ್ಧಿ; ಅವರ ಪತನವನ್ನು ಸಜ್ಜನರು ಕಣ್ಣಾರೆ ಕಾಣುವರು.</verse>
				<verse number="17">ನಿನ್ನ ಮಗನನ್ನು ದಂಡಿಸಿ ಸರಿಪಡಿಸು; ಅವನು ನಿನ್ನನ್ನು ಸಂತೋಷಪಡಿಸುವನು, ಮನೋಲ್ಲಾಸಗೊಳಿಸುವನು.</verse>
				<verse number="18">ಪ್ರವಾದನೆಗಳಿಲ್ಲದಿರುವಾಗ ಪ್ರಜೆಗಳು ಅಂಕೆಮೀರಿ ನಡೆಯುತ್ತಾರೆ, ಧರ್ಮಶಾಸ್ತ್ರಾನುಸಾರ ನಡೆಯುವವನು ಭಾಗ್ಯವಂತನು.</verse>
				<verse number="19">ಮಾತಿನಿಂದ ಮಾತ್ರ ಸೇವಕನನ್ನು ತಿದ್ದಲಾಗದು; ಮಾತು ಕಿವಿಗೆ ಬಿದ್ದರೂ ಅದನ್ನು ಗ್ರಹಿಸಲಾರದು.</verse>
				<verse number="20">ದುಡುಕಿ ಮಾತಾಡುವವನನ್ನು ನೋಡು; ಅಂಥವನಿಗಿಂತಲು ಮೂಢನ ಸುಧಾರಣೆ ಹೆಚ್ಚು ಸಾಧ್ಯ.</verse>
				<verse number="21">ಬಾಲ್ಯದಿಂದ ಕೋಮಲವಾಗಿ ಸಾಕಲಾದ ಸೇವಕನು, ಕೊನೆಗೆ ಕುಮಾರನಂತೆ ನಿನ್ನದೆಲ್ಲವನ್ನು ಕಿತ್ತುಕೊಂಡಾನು.</verse>
				<verse number="22">ಕೋಪಿಷ್ಠನು ಜಗಳವೆಬ್ಬಿಸುವನು; ಕ್ರೋಧಶೀಲನು ದೋಷಭರಿತನು.</verse>
				<verse number="23">ಗರ್ವವು ಮನುಷ್ಯನನ್ನು ದೀನಸ್ಥಿತಿಗೆ ಇಳಿಸುವುದು; ನಮ್ರತೆ ಅವನನ್ನು ಗೌರವಸ್ಥಿತಿಗೆ ಏರಿಸುವುದು.</verse>
				<verse number="24">ಚೋರರ ಮಿತ್ರ ಸ್ವಂತ ಪ್ರಾಣಕ್ಕೆ ಶತ್ರು, ಶಾಪ ಕಿವಿಗೆ ಬೀಳುತ್ತಿದ್ದರೂ ಆತ ಮೌನ ತಾಳುವನು.</verse>
				<verse number="25">ಮಾನವರಿಗೆ ಹೆದರಿ ನಡೆವವನು ಬಲೆಗೆ ಸಿಕ್ಕಿಬೀಳುವನು; ಸರ್ವೇಶ್ವರನಲ್ಲಿ ನಂಬಿಕೆಯಿಟ್ಟವನು ಸಂರಕ್ಷಣೆ ಹೊಂದುವನು.</verse>
				<verse number="26">ರಾಜ್ಯಾಧಿಕಾರಿಗಳಲ್ಲಿ ದಯೆ ಯಾಚಿಸುವವರು ಅನೇಕರು; ಪ್ರತಿಯೊಬ್ಬನಿಗೆ ಸರಿಯಾದ ನ್ಯಾಯ ದೊರಕಿಸುವವನು ಸರ್ವೇಶ್ವರನು.</verse>
				<verse number="27">ಸಜ್ಜನರಿಗೆ ದುರ್ಮಾರ್ಗಿ ತಿರಸ್ಕೃತನು; ದುರ್ಜನರಿಗೆ ಸನ್ಮಾರ್ಗಿ ತಿರಸ್ಕೃತನು.</verse>
			</chapter>
			<chapter number="30">
				<verse number="1">ಮಸ್ಸಾಗೆ ಸೇರಿದ ಜಾಕೆ ಎಂಬುವವನ ಮಗ ಆಗೂರನ ಹಿತೋಕ್ತಿಗಳು: ಈತನು ಇಥಿಯೇಲನಿಗೆ ಹಾಗೂ ಉಕ್ಕಾಲನಿಗೆ ಮಾಡಿದ ಪ್ರವಾದನೆ:</verse>
				<verse number="2">ಮಾನವರಲ್ಲಿ ನನ್ನಂಥ ಪಶುಪ್ರಾಯನಿಲ್ಲ; ಮನುಷ್ಯ ವಿವೇಕವೂ ನನಗಿಲ್ಲ.</verse>
				<verse number="3">ಜ್ಞಾನವನ್ನು ನಾನು ಪಡೆದುಕೊಂಡಿಲ್ಲ; ಪರಮಪಾವನರ ತಿಳುವಳಿಕೆ ನನಗಿಲ್ಲ.</verse>
				<verse number="4">ಆಕಾಶಕ್ಕೆ ಏರಿ ಮರಳಿದವನು ಯಾರು? ಮುಷ್ಟಿಯಲ್ಲಿ ಗಾಳಿಯನ್ನು ಹಿಡಿದಿಟ್ಟವನು ಯಾರು? ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಎಲ್ಲೆಮೇರೆಗಳನ್ನು ನಿಗದಿಮಾಡಿದವನು ಯಾರು? ಆತನ ಹೆಸರೇನು? ಆತನ ಮಗನ ಹೆಸರೇನು? ಬಲ್ಲೆಯಾ?</verse>
				<verse number="5">ದೇವರ ಒಂದೊಂದು ಮಾತೂ ಪರಿಶುದ್ಧ; ಆತನೇ ಶರಣರ ಖೇಡ್ಯ;</verse>
				<verse number="6">ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಇಲ್ಲವಾದರೆ ಆತ ನಿನ್ನನ್ನು ಖಂಡಿಸಿಯಾನು, ನೀನು ಸುಳ್ಳುಗಾರನಾಗಿ ತೋರಿಬಂದೀಯೆ!</verse>
				<verse number="7">ನಿನ್ನಿಂದ ಎರಡು ವರಗಳನ್ನು ಬೇಡಿಕೊಂಡಿದ್ದೇನೆ: ನಿರಾಕರಿಸಬೇಡ, ನಾನು ಸಾಯುವುದರೊಳಗೆ ಅವುಗಳನ್ನು ಅನುಗ್ರಹಿಸು:</verse>
				<verse number="8">ಕಪಟವಾದುದನ್ನು, ಮಿಥ್ಯವಾದುದನ್ನು ನನ್ನಿಂದ ತೊಲಗಿಸು; ನನಗೆ ಬಡತನ ಬೇಡ, ಐಶ್ವರ್ಯವೂ ಬೇಡ, ಸಾಕಷ್ಟು ಆಹಾರವನ್ನು ಮಾತ್ರ ನೀಡು.</verse>
				<verse number="9">ಎಲ್ಲವೂ ಇದ್ದರೆ “ಸರ್ವೇಶ್ವರನು ಯಾರು?” ಎಂದು ನಿನ್ನನ್ನೆ ನಾನು ತಿರಸ್ಕರಿಸೇನು. ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರಿಗೆ ಅಪಕೀರ್ತಿ ತಂದೇನು.</verse>
				<verse number="10">ದಾಸನ ವಿರುದ್ಧ ದಣಿಗೆ ದೂರು ಹೇಳಬೇಡ; ಅವನು ನಿನ್ನನ್ನು ಶಪಿಸಾನು, ನಿನ್ನಲ್ಲೆ ದೋಷ ಕಂಡುಬಂದೀತು.</verse>
				<verse number="11">ತಂದೆಯನ್ನೇ ಶಪಿಸುವ, ತಾಯಿಗು ಮರ್ಯಾದೆಯನ್ನೂ ತರದ ಮಕ್ಕಳುಂಟು.</verse>
				<verse number="12">ತಮ್ಮ ಕೊಳೆಯನ್ನು ತೊಳೆದುಕೊಳ್ಳದ, ತಾವೆ ಪರಿಶುದ್ಧರೆಂದು ಎಣಿಸಿಕೊಳ್ಳುವ ಜನರುಂಟು.</verse>
				<verse number="13">ಮೇಲಿಂದ ಮೇಲಕ್ಕೆ ದೃಷ್ಟಿಸಿ ನೋಡುವ, ಠೀವಿಯಿಂದ ಕಣ್ಣುರೆಪ್ಪೆಗಳನ್ನೇರಿಸುವ ಜನರುಂಟು.</verse>
				<verse number="14">ಖಡ್ಗದಂಥ ಹಲ್ಲುಗಳು, ಕತ್ತಿಯಂಥ ಕೋರೆಗಳೂ ಉಳ್ಳವರಿದ್ದಾರೆ. ನಾಡಿನ ಬಡವರನ್ನು ಇವರು ತಿಂದುಬಿಡುವರು; ಜನರಲ್ಲಿ ದಿಕ್ಕಿಲ್ಲದವರನ್ನು ಇವರು ನುಂಗಿಬಿಡುವರು.</verse>
				<verse number="15">ಜಿಗಣೆಗೆ “ಕೊಡು, ಕೊಡು” ಎಂಬ ಇಬ್ಬರು ಹೆಣ್ಣು ಮಕ್ಕಳುಂಟು; ಎಂದೂ ತೃಪ್ತಿಪಡೆಯದವು ಮೂರುಂಟು; ಹೌದು, ‘ಸಾಕು’ ಎನ್ನದವುಗಳು ನಾಲ್ಕುಂಟು:</verse>
				<verse number="16">ಅವು ಯಾವುದೆಂದರೆ: ಪಾತಾಳ, ಹೆರದ ಗರ್ಭ, ನೀರಿಗಾಗಿ ಹಾತೊರೆಯುವ ಭೂಮಿ, ‘ಸಾಕಾಯಿತು’ ಎನ್ನದ ಬೆಂಕಿ.</verse>
				<verse number="17">ತಂದೆಯನ್ನು ಪರಿಹಾಸ್ಯಮಾಡುವ ಕಣ್ಣನ್ನು, ತಾಯಿಯ ಆಜ್ಞೆಯನ್ನು ಧಿಕ್ಕರಿಸುವ ನೇತ್ರವನ್ನು ಹಳ್ಳಕೊಳ್ಳದ ಕಾಗೆಗಳು ಕುಕ್ಕುವುವು, ರಣಹದ್ದುಗಳು ತಿಂದುಬಿಡುವುವು.</verse>
				<verse number="18">ನನ್ನ ಅರಿವಿಗೆ ಬಾರದ ಮೂರು ವಿಷಯಗಳಿವೆ: ಹೌದು, ನನ್ನ ಬುದ್ಧಿಗೆ ಎಟುಕದವು ನಾಲ್ಕಿವೆ:</verse>
				<verse number="19">ಅವು ಯಾವುವೆಂದರೆ: ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಯುವಕ-ಯುವತಿಯರ ಪರಸ್ಪರ ಆಕರ್ಷಣೆ.</verse>
				<verse number="20">ವ್ಯಭಿಚಾರಿಣಿಯ ವರ್ತನೆ ಹೀಗಿದೆ: ಅವಳು ಉಣ್ಣುತ್ತಾಳೆ, ಬಾಯಿ ಒರೆಸಿಕೊಳ್ಳುತ್ತಾಳೆ. ಬಳಿಕ ‘ನಾನು ತಪ್ಪುಮಾಡಲಿಲ್ಲವಲ್ಲಾ’ ಎನ್ನುತ್ತಾಳೆ.</verse>
				<verse number="21">ಜಗತ್ತು ಮೂರು ವಿಷಯಗಳ ನಿಮಿತ್ತ ಕಂಪಿಸುತ್ತದೆ: ನಾಲ್ಕರ ನಿಮಿತ್ತವೂ ಹೊರೆ ತಾಳಲಾರದಂತೆ ಆಗುತ್ತದೆ:</verse>
				<verse number="22">ಅವು ಯಾವುವೆಂದರೆ: ಅರಸನಾದ ಆಳು, ಹೊಟ್ಟೆ ತುಂಬಿಸಿಕೊಂಡು ಸುತ್ತಾಡುವ ನೀಚ,</verse>
				<verse number="23">ಯಾರಿಗೂ ಬೇಡವಾದವಳಾಗಿದ್ದ ಮದುವೆಯಾದ ಚಂಡಿ, ಧರ್ಮಪತ್ನಿಯ ಸ್ಥಾನವನ್ನು ಕಸಿದುಕೊಂಡ ದಾಸಿ.</verse>
				<verse number="24">ಚಿಕ್ಕವು ಆದರೂ ದೊಡ್ಡ ಜ್ಞಾನವುಳ್ಳ ನಾಲ್ಕು ಜಂತುಗಳುಂಟು:</verse>
				<verse number="25">ಇರುವೆಗಳು - ಬಲಹೀನ ಜಂತುಗಳು, ಆದರೂ ಸುಗ್ಗಿಯಲ್ಲೆ ಆಹಾರವನ್ನು ಸೇರಿಸಿಟ್ಟುಕೊಳ್ಳುತ್ತವೆ;</verse>
				<verse number="26">ಬೆಟ್ಟದ ಮೊಲಗಳು - ದೊಡ್ಡ ಪ್ರಾಣಿಗಳೇನೂ ಅಲ್ಲ, ಆದರೂ ಬಂಡೆಗಳ ಬಿರುಕುಗಳಲ್ಲಿ ಮನೆಮಾಡಿಕೊಳ್ಳುತ್ತವೆ;</verse>
				<verse number="27">ಮಿಡತೆಗಳು - ಅವಕ್ಕೆ ಅರಸನಿಲ್ಲ, ಆದರೂ ಅವೆಲ್ಲ ದಂಡುದಂಡಾಗಿ ಹೊರಡುತ್ತವೆ;</verse>
				<verse number="28">ಹಲ್ಲಿ - ಅಂಗೈ ಆಸರೆ ಪಡೆವ ಪ್ರಾಣಿ, ಆದರೂ ಅರಮನೆಗಳಲ್ಲಿ ವಾಸ ಮಾಡುತ್ತದೆ.</verse>
				<verse number="29">ಗಂಭೀರ ಗಮನದ ಮೂರು ಪ್ರಾಣಿಗಳುಂಟು: ಹೌದು ಗಂಭೀರ ಗತಿಯ ನಾಲ್ಕನೆಯ ಪ್ರಾಣಿಯೂ ಉಂಟು:</verse>
				<verse number="30">ಯಾವುದಕ್ಕೂ ಹೆದರಿ ಓರೆಯಾಗದ ಮೃಗರಾಜನಾದ ಸಿಂಹ,</verse>
				<verse number="31">ಕತ್ತೆತ್ತಿ ನಡೆಯುವ ಹುಂಜ, ಮಂದೆಗೆ ಮುಂದೆ ಹೋಗುವ ಹೋತ, ಸೈನ್ಯಸಮೇತನಾದ ರಾಜ.</verse>
				<verse number="32">ನೀನು ಗರ್ವದಿಂದ ಮೂರ್ಖನಾಗಿ ನಡೆದಿದ್ದರೆ, ದುರಾಲೋಚನೆಯನ್ನು ಮಾಡಿದ್ದರೆ ಬಾಯಿಯ ಮೇಲೆ ಕೈಯಿಟ್ಟುಕೊ.</verse>
				<verse number="33">ಹಾಲು ಕಡೆಯುವುದರಿಂದ ಬೆಣ್ಣೆ; ಮೂಗು ಹಿಂಡುವುದರಿಂದ ರಕ್ತ; ಕೋಪ ಎಬ್ಬಿಸುವುದರಿಂದ ಜಗಳ.</verse>
			</chapter>
			<chapter number="31">
				<verse number="1">ಮಸ್ಸಾರಾಜ್ಯದ ಅರಸ ಲೆಮೂವೇಲನ ವಚನಗಳು: ಅವನ ತಾಯಿ ಅವನಿಗೆ ಉಪದೇಶಿಸಿದ ಹಿತೋಕ್ತಿಗಳು:</verse>
				<verse number="2">ಮಗನೇ, ನನ್ನ ಕರುಳಿನ ಕುಡಿಯೇ, ನನ್ನ ಹರಕೆಯ ಮಗನೇ, ನಾನು ಹೇಳುವುದನ್ನು ಕೇಳು:</verse>
				<verse number="3">ನಿನ್ನ ಪೌರುಷತ್ವವನ್ನೆಲ್ಲಾ ಸ್ತ್ರೀಯರಿಗೆ ಒಪ್ಪಿಸದಿರು; ಅರಸನನ್ನೆ ನಾಶಮಾಡಬಲ್ಲ ಅವರಿಗಾಗಿ ಹಣವನ್ನೆಲ್ಲ ವ್ಯಯಮಾಡದಿರು.</verse>
				<verse number="4">ಕುಡುಕತನ ರಾಜನಿಗೆ ತಕ್ಕುದ್ದಲ್ಲ; ಲೆಮೂವೇಲನೇ ಕೇಳು, ಅದು ರಾಜನಿಗೆ ಯೋಗ್ಯವಲ್ಲ; ಮದ್ಯಪಾನಾಸಕ್ತಿ ಅಧಿಕಾರಿಗಳಿಗೆ ಹಿತವಲ್ಲ.</verse>
				<verse number="5">ಕುಡಿದರೆ ಕರ್ತವ್ಯವನ್ನು ಮರೆಯುತ್ತಾರೆ; ದೀನದಲಿತರಿಗೆ ನ್ಯಾಯ ತೀರಿಸದೆ ತಾರತಮ್ಯ ಮಾಡುತ್ತಾರೆ.</verse>
				<verse number="6">ಸಾರಾಯಿ ಸಾಯುತ್ತಿರುವವನಿಗಿರಲಿ; ಮದ್ಯ, ಮನೋವ್ಯಥೆಪಡುವವನಿಗಿರಲಿ.</verse>
				<verse number="7">ಅವರು ಕುಡಿದು ಬಡತನ ಮರೆಯಲಿ, ತಮ್ಮ ಯಾತನೆಯನ್ನು ನೆನೆಯದಿರಲಿ.</verse>
				<verse number="8">ಬಾಯಿಲ್ಲದವರ ಹಾಗೂ ದೀನದಲಿತರ ಪರವಾಗಿ ನ್ಯಾಯ ದೊರಕುವಂತೆ ಬಾಯಿಬಿಚ್ಚಿ ಮಾತಾಡು.</verse>
				<verse number="9">ಅವರ ಪರವಾಗಿ ಮಾತಾಡಿ ನ್ಯಾಯವಾದ ತೀರ್ಪುಕೊಡು; ದೀನದರಿದ್ರರ ಹಕ್ಕು ಬಾಧ್ಯತೆಯನ್ನು ಕಾಪಾಡು.</verse>
				<verse number="10">ಗುಣವತಿಯಾದ ಹೆಂಡತಿ ಎಲ್ಲಿ ಸಿಕ್ಕಾಳು? ಆಕೆ ಹವಳಕ್ಕಿಂತಲೂ ಬಹು ಮೌಲ್ಯಳು.</verse>
				<verse number="11">ಗಂಡನು ಆಕೆಯಲ್ಲಿ ಹೃತ್ಪೂರ್ವಕ ನಂಬಿಕೆಯಿಡುವನು; ಅವನಿಗೆ ಆದಾಯದ ಕೊರತೆ ಇರದು.</verse>
				<verse number="12">ಜೀವಮಾನವಿಡೀ ಆಕೆ ಅವನಿಗೆ ಒಳ್ಳೆಯದನ್ನೆ ಮಾಡುವಳು; ಎಂದಿಗೂ ಆಕೆ ಅವನಿಗೆ ಕೇಡನ್ನು ಬಗೆಯಳು.</verse>
				<verse number="13">ಉಣ್ಣೆಯನ್ನೂ ಸೆಣಬನ್ನೂ ಹುಡುಕಿ ತರುವಳು; ತನ್ನ ಕೈಗಳಿಂದಲೇ ಬಟ್ಟೆಯನ್ನು ನೇಯುವಳು.</verse>
				<verse number="14">ವ್ಯಾಪಾರದ ಹಡಗುಗಳಂತೆ ದೂರದಿಂದ ಆಹಾರ ಪದಾರ್ಥಗಳನ್ನು ತರುವಳು.</verse>
				<verse number="15">ಇನ್ನೂ ಕತ್ತಲಿರುವಾಗಲೆ ಎದ್ದುಬಿಡುತ್ತಾಳೆ, ಮನೆಯವರಿಗೆ ತಿಂಡಿತೀರ್ಥ ಅಣಿಮಾಡುತ್ತಾಳೆ, ಕೆಲಸಗಿತ್ತಿಯರಿಗೆ ದಿನಗೆಲಸಗಳನ್ನು ನೇಮಿಸುತ್ತಾಳೆ.</verse>
				<verse number="16">ಆಲೋಚನೆಮಾಡಿ ಹೊಲವನ್ನು ಕೊಂಡುಕೊಳ್ಳುತ್ತಾಳೆ; ಕೈಗೆಲಸದ ಆದಾಯದಿಂದಲೆ ತೋಟ ಮಾಡಿಸುತ್ತಾಳೆ.</verse>
				<verse number="17">ನಡುಕಟ್ಟಿ ಕೆಲಸಕ್ಕೆ ನಿಲ್ಲುತ್ತಾಳೆ, ದುಡಿಮೆಯಲ್ಲಿ ತೋಳ್ಬಲವನ್ನು ತೋರ್ಪಡಿಸುತ್ತಾಳೆ.</verse>
				<verse number="18">ತನ್ನ ಕೆಲಸದಿಂದ ಲಭಿಸುವ ಆದಾಯದ ರುಚಿ ಆಕೆಗಿದೆ; ಆಕೆಯ ಮನೆದೀಪ ರಾತ್ರಿಯೆಲ್ಲ ಆರದಿದೆ.</verse>
				<verse number="19">ರಾಟೆಯನ್ನು ತಾನೆ ಆಡಿಸುತ್ತಾಳೆ; ಕದಿರನ್ನು ಕೈಯಿಂದ ಹಿಡಿಯುತ್ತಾಳೆ.</verse>
				<verse number="20">ಬಡವರಿಗೆ ಕೈಬಿಚ್ಚಿ ಕೊಡುತ್ತಾಳೆ; ದಿಕ್ಕಿಲ್ಲದವರಿಗೆ ಕೈಚಾಚಿ ನೀಡುತ್ತಾಳೆ.</verse>
				<verse number="21">ಚಳಿಗಾಲದಲ್ಲಿ ಮನೆಯವರಿಗಾಗಿ ಆಕೆ ಚಿಂತಿಸಬೇಕಿಲ್ಲ; ಏಕೆಂದರೆ ಎಲ್ಲರಿಗೂ ಬೆಚ್ಚನೆಯ ಕಂಬಳಿಗಳಿವೆ.</verse>
				<verse number="22">ತನಗೆ ಬೇಕಾದ ರತ್ನಗಂಬಳಿಯನ್ನು ತಾನೆ ನೇಯ್ದಿದ್ದಾಳೆ; ಆಕೆಯ ಉಡುಪೋ ನಾರುಮಡಿ, ರಕ್ತಾಂಬರ.</verse>
				<verse number="23">ಆಕೆಯ ಗಂಡ ನಾಡಿಗರಲ್ಲಿ ಗಣ್ಯ; ನ್ಯಾಯಸ್ಥಾನದಲ್ಲಿ ಸನ್ಮಾನಿತ.</verse>
				<verse number="24">ದುಪ್ಪಟಿಗಳನ್ನು ನೇಯ್ದು ಮಾರಾಟ ಮಾಡುತ್ತಾಳೆ; ನಡುಕಟ್ಟುಗಳನ್ನು ಮಾಡಿ ವರ್ತಕರಿಗೆ ವಿಕ್ರಯಿಸುತ್ತಾಳೆ.</verse>
				<verse number="25">ಘನತೆ, ಗೌರವ, ಆಕೆಯ ಬಟ್ಟೆಬರೆ; ಭವಿಷ್ಯತ್ತಿನಲ್ಲಿ ಆಕೆಗೆ ನಿರ್ಭೀತ ನಗೆ.</verse>
				<verse number="26">ಆಕೆಯ ಬಾಯಿಂದ ಬರುವ ಮಾತು ಜ್ಞಾನಪೂರ್ಣ; ಆಕೆ ಹೇಳುವ ಬುದ್ಧಿಮಾತು ಪ್ರೀತಿಪ್ರೇರಿತ.</verse>
				<verse number="27">ಮನೆಗೆಲಸವನ್ನೆಲ್ಲ ಚೆನ್ನಾಗಿ ನೋಡಿಕೊಳ್ಳುತ್ತಾಳೆ; ಆಕೆ ಕೆಲಸಮಾಡದೆ ಊಟಮಾಡುವವಳಲ್ಲ.</verse>
				<verse number="28">ಮಕ್ಕಳು ಆಕೆಯನ್ನು ಧನ್ಯಳೆಂದು ಹೊಗಳುವರು.</verse>
				<verse number="29">ಗಂಡನು, “ಗುಣವತಿಯರು ಎಷ್ಟೋಮಂದಿ ಇರುವರು; ಅವರೆಲ್ಲರಿಗಿಂತ ನೀನೆ, ಶ್ರೇಷ್ಠಳು” ಎಂದು ಕೊಂಡಾಡುವನು.</verse>
				<verse number="30">ಆಕರ್ಷಣೆ ನೆಚ್ಚತಕ್ಕದಲ್ಲ. ಅಲಂಕಾರ ನೆಲೆಯಾದುದಲ್ಲ; ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವಳೆ ಸ್ತುತ್ಯಾರ್ಹಳು.</verse>
				<verse number="31">ಆಕೆಯ ಕೈ ಕೆಲಸಕ್ಕೆ ತಕ್ಕ ಪ್ರತಿಫಲ ಲಭಿಸಲಿ; ಆಕೆಯ ಕಾರ್ಯಗಳೇ ಆಕೆಯನ್ನು ಪುರದ್ವಾರಗಳಲ್ಲಿ ಹೊಗಳಲಿ!</verse>
			</chapter>
		</book>
		<book number="21">
			<chapter number="1">
				<verse number="1">ದಾವೀದನ ಮಗನೂ ಜೆರುಸಲೇಮನ್ನು ಆಳುವ ಅರಸನೂ ಆದ ಉಪದೇಶಕನ ಪ್ರವಚನಗಳು:</verse>
				<verse number="2">ಉಪದೇಶಕನು ಹೇಳುವುದನ್ನು ಕೇಳಿ: ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥವೇ ವ್ಯರ್ಥ, ಎಲ್ಲವೂ ವ್ಯರ್ಥ!</verse>
				<verse number="3">ಈ ಲೋಕದಲ್ಲಿ ಮನುಷ್ಯನು ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ದೊರಕುವ ಲಾಭವಾದರೂ ಏನು?</verse>
				<verse number="4">ಒಂದು ಸಂತತಿ ಗತಿಸುತ್ತದೆ, ಮತ್ತೊಂದು ಸಂತತಿ ಬರುತ್ತದೆ, ಭೂಮಿಯಾದರೋ ಶಾಶ್ವತವಾಗಿ ನಿಲ್ಲುತ್ತದೆ.</verse>
				<verse number="5">ಸೂರ್ಯನು ಮೂಡುತ್ತಾನೆ, ಸೂರ್ಯನು ಮುಳುಗುತ್ತಾನೆ, ತಾನು ಹೊರಟ ಸ್ಥಳಕ್ಕೆ ಮರಳಿ ಓಡುತ್ತಾನೆ.</verse>
				<verse number="6">ಗಾಳಿ ದಕ್ಷಿಣಕ್ಕೆ ಬೀಸುತ್ತದೆ, ಉತ್ತರದ ಕಡೆಗೆ ತಿರುಗುತ್ತದೆ, ಸುತ್ತುತ್ತಾ ಸುತ್ತುತ್ತಾ ಹೋಗಿ ಹಿಂತಿರುಗಿ ಬರುತ್ತದೆ.</verse>
				<verse number="7">ನದಿಗಳು ಹರಿದು ಸಮುದ್ರವನ್ನು ಸೇರುತ್ತವೆ, ಆದರೂ ಸಮುದ್ರವು ತುಂಬುವುದಿಲ್ಲ. ಅವು ಎಲ್ಲಿಂದ ಹರಿದು ಬರುತ್ತವೋ ಅಲ್ಲಿಗೆ ಹಿಂತಿರುಗಿ ಹೋಗುತ್ತವೆ.</verse>
				<verse number="8">ಮನುಷ್ಯನಿಂದ ವಿವರಿಸಲಾಗದಷ್ಟು ಎಲ್ಲವೂ ನೀರಸ. ಎಷ್ಟು ನೋಡಿದರೂ ಕಣ್ಣಿಗೆ ತೃಪ್ತಿಯಿಲ್ಲ. ಎಷ್ಟು ಕೇಳಿದರೂ ಕಿವಿಗೆ ದಣಿವಿಲ್ಲ.</verse>
				<verse number="9">ಇದ್ದದ್ದೇ ಇರುತ್ತದೆ, ನಡೆದದ್ದೇ ನಡೆಯುತ್ತದೆ. ಲೋಕದಲ್ಲಿ ಹೊಸದೇನೂ ಇಲ್ಲ.</verse>
				<verse number="10">ಇಗೋ, ಹೊಸದು ಎನಿಸುಕೊಳ್ಳುವ ವಸ್ತು ಇದ್ದರೂ ಅದು ನಮಗಿಂತ ಮುಂಚೆಯೇ ಪುರಾತನ ಕಾಲದಲ್ಲೇ ಇದ್ದುದು.</verse>
				<verse number="11">ಹಿಂದಿನ ಕಾಲದವರ ಜ್ಞಾಪಕವು ಇಂದಿನವರಿಗಿಲ್ಲ. ಮುಂದಿನ ಕಾಲದವರ ಜ್ಞಾಪಕವು ಅವರಿಗಿಂತ ಮುಂದೆ ಬರುವವರಿಗೆ ಇರುವುದಿಲ್ಲ.</verse>
				<verse number="12">ಉಪದೇಶಕನಾದ ನಾನು ಜೆರುಸಲೇಮಿನಲ್ಲಿ ಇಸ್ರಯೇಲರಿಗೆ ಅರಸನಾಗಿದ್ದೆ.</verse>
				<verse number="13">ಆಕಾಶದ ಕೆಳಗೆ ನಡೆಯುವ ಎಲ್ಲಾ ಕಾರ್ಯಗಳನ್ನು ಜ್ಞಾನದಿಂದ ವಿಚಾರಿಸಿದೆ; ವಿಮರ್ಶಿಸಲು ಮನಸ್ಸು ಮಾಡಿದೆ. ನರಮಾನವರ ಕರ್ತವ್ಯ ಎಂದು ದೇವರು ವಿಧಿಸಿರುವ ಕೆಲಸಕಾರ್ಯಗಳೆಲ್ಲ ಕಷ್ಟಕರವಾದುವೇ.</verse>
				<verse number="14">ಲೋಕದಲ್ಲಿ ನಡೆಯುವ ಎಲ್ಲ ಕಾರ್ಯಕಲಾಪಗಳನ್ನು ಗಮನಿಸಿದ್ದೇನೆ. ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಎಲ್ಲವೂ ವ್ಯರ್ಥ.</verse>
				<verse number="15">ಸೊಟ್ಟವಾದುದನ್ನು ನೆಟ್ಟಗೆ ಮಾಡುವುದು ಅಸಾಧ್ಯ, ಇಲ್ಲವಾದುದನ್ನು ಲೆಕ್ಕ ಹಾಕುವುದು ಅಶಕ್ಯ.</verse>
				<verse number="16">ನನ್ನಷ್ಟಕ್ಕೆ ನಾನೇ ಹೀಗೆಂದುಕೊಂಡೆ: “ನನಗಿಂತ ಮೊದಲು ಜೆರುಸಲೇಮನ್ನು ಆಳಿದ ಎಲ್ಲಾ ಅರಸರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ಜ್ಞಾನ ಹಾಗೂ ತಿಳುವಳಿಕೆಯ ವಿಶೇಷ ಅನುಭವ ನನಗಿದೆ\.</verse>
				<verse number="17">ಜ್ಞಾನ ಎಂದರೇನು? ಮೂಢತನವೆಂದರೇನು? ಬುದ್ಧಿಹೀನತೆ ಎಂದರೇನು? ಇವುಗಳನ್ನು ಅರಿತುಕೊಳ್ಳಲು ಮನಸ್ಸು ಮಾಡಿದೆ. ಆದರೆ ಇದೂ ಸಹ ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ವ್ಯರ್ಥ ಎಂದು ಅರಿತುಕೊಂಡೆ.</verse>
				<verse number="18">ಅಧಿಕ ಜ್ಞಾನವುಳ್ಳವನಿಗೆ ಅಧಿಕ ವ್ಯಥೆ, ಹೆಚ್ಚು ತಿಳುವಳಿಕೆಯುಳ್ಳವನಿಗೆ ಹೆಚ್ಚು ಸಂಕಟ.</verse>
			</chapter>
			<chapter number="2">
				<verse number="1">“ಬಾ ಮನವೇ, ಸಂತೋಷದ ಮೂಲಕ ನಿನ್ನನ್ನು ಪರೀಕ್ಷಿಸುವೆ; ಸುಖಭೋಗವನ್ನು ಅನುಭವಿಸು” ಎಂದು ಮನಸ್ಸಿನಲ್ಲೇ ಹೇಳಿಕೊಂಡೆ. ಆದರೆ ಇದೂ ವ್ಯರ್ಥವೇ ಸರಿ.</verse>
				<verse number="2">“ನಗೆ ಹುಚ್ಚುತನ, ಸುಖಭೋಗ ನಿಷ್ಪ್ರಯೋಜಕ” ಎಂದುಕೊಂಡೆ.</verse>
				<verse number="3">ದೇಹಕ್ಕೆ ಮಧುಪಾನ ಮಾಡಿಸೋಣ; ಮೂರ್ಖತನದಲ್ಲಿ ತಲ್ಲೀನನಾಗೋಣ; ಜೀವಮಾನದ ಅಲ್ಪಕಾಲದಲ್ಲಿ ನರಮಾನವನಿಗೆ ಧರೆಯಲ್ಲಿ ಯಾವುದು ಹಿತ ಎಂದು ತಿಳಿದುಕೊಳ್ಳೋಣ” ಎಂದು ಜ್ಞಾನಾಶಕ್ತನಾದ ನಾನು ಮನಸ್ಸಿನಲ್ಲೇ ಅಂದುಕೊಂಡೆ.</verse>
				<verse number="4">ಮಹತ್ಕಾರ್ಯಗಳನ್ನು ಎಸಗಿದೆ; ಮನೆಮಾರುಗಳನ್ನು ಕಟ್ಟಿಸಿಕೊಂಡೆ;</verse>
				<verse number="5">ತೋಟ ಉದ್ಯಾನವನಗಳನ್ನು ಬೆಳೆಸಿದೆ. ಅವುಗಳಲ್ಲಿ ನಾನಾ ತರದ ಫಲವೃಕ್ಷಗಳನ್ನು ನಾಟಿಮಾಡಿಸಿದೆ.</verse>
				<verse number="6">ಬೆಳೆಯುವ ಗಿಡತೋಟಗಳಿಗೆ ನೀರುಹಾಯಿಸಲು ಕೆರೆಕುಂಟೆಗಳನ್ನು ತೋಡಿಸಿದೆ.</verse>
				<verse number="7">ಗಂಡು ಹೆಣ್ಣಾಳುಗಳನ್ನು ಕೊಂಡುಕೊಂಡೆ. ಇವರಿಗಾದ ಮಕ್ಕಳು ನನಗೆ ಹುಟ್ಟುಗುಲಾಮರಾದರು. ಇದಲ್ಲದೆ ಜೆರುಸಲೇಮಿನಲ್ಲಿ ಹಿಂದೆ ಇದ್ದವರೆಲ್ಲರಿಗಿಂತಲೂ ಹೆಚ್ಚು ದನಕುರಿಗಳು ನನಗಾದವು; ನಾನು ಧನವಂತನಾದೆ.</verse>
				<verse number="8">ಬೆಳ್ಳಿಬಂಗಾರಗಳನ್ನೂ ಅರಸರ ಹಾಗೂ ಸಾಮಂತರ ಕಪ್ಪಕಾಣಿಕೆಗಳನ್ನೂ ಶೇಖರಿಸಿಕೊಂಡೆ. ಗಾಯಕಗಾಯಕಿಯರೂ ಭೋಗವಿಲಾಸಕ್ಕಾಗಿ ಹಲವಾರು ಉಪಪತ್ನಿಯರೂ ನನಗಿದ್ದರು.</verse>
				<verse number="9">ಹೀಗೆ ಜೆರುಸಲೇಮಿನಲ್ಲಿ ಹಿಂದೆ ಇದ್ದ ಎಲ್ಲರಿಗಿಂತಲೂ ಅಭಿವೃದ್ಧಿಹೊಂದಿ ಶ್ರೀಮಂತನಾದೆ.</verse>
				<verse number="10">ನನ್ನ ಕಣ್ಣು ಬಯಸಿದ್ದೆಲ್ಲವನ್ನೂ ಅದಕ್ಕೆ ಒಪ್ಪಿಸಿದೆ. ಹೃದಯ ಕೋರಿದ ಸಂತೋಷವನ್ನು ಅದಕ್ಕೆ ನಿರಾಕರಿಸಲಿಲ್ಲ. ನನ್ನ ಮನ ಎಲ್ಲಾ ಕಾರ್ಯಕಲಾಪಗಳಲ್ಲೂ ಉಲ್ಲಾಸಗೊಳ್ಳುತ್ತಿತ್ತು. ಇವೆಲ್ಲ ನನ್ನ ಪ್ರಯಾಸಕ್ಕೆ ದೊರೆತ ಫಲ.</verse>
				<verse number="11">ಆಗ ನಾನೇ ಸ್ವತಃ ಮಾಡಿದ ಎಲ್ಲಾ ಕೆಲಸಕಾರ್ಯಗಳನ್ನೂ ಪಟ್ಟ ಎಲ್ಲ ಪ್ರಯಾಸವನ್ನೂ ಗಮನವಿಟ್ಟು ಪರಿಶೀಲಿಸಿದೆ. ಆದರೆ ಇಗೋ, ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ಎಲ್ಲವೂ ವ್ಯರ್ಥ; ಲೋಕದಲ್ಲಿ ಲಾಭಕರವಾದುದು ಏನೂ ಕಾಣಲಿಲ್ಲ.</verse>
				<verse number="12">ರಾಜನ ಪ್ರಯತ್ನವೇ ಹೀಗಾದ ಮೇಲೆ ಮತ್ತೊಬ್ಬನಿಂದ ಏನಾದೀತು? ಆದದ್ದೇ ಆಗುತ್ತದೆ ಎಂದುಕೊಂಡೆ. ಜ್ಞಾನವೆಂದರೇನು? ಮೂಢತನವೆಂದರೇನು? ಬುದ್ಧಿಹೀನತೆ ಎಂದರೇನು? ಇವುಗಳ ಬಗ್ಗೆ ಮತ್ತೆ ಚಿಂತಿಸಿದೆ.</verse>
				<verse number="13">ಆಗ “ಬೆಳಕು ಕತ್ತಲೆಗಿಂತ ಶ್ರೇಷ್ಠವಾಗಿರುವಂತೆ ಜ್ಞಾನ ಮೂಢತನಕ್ಕಿಂತ ಶ್ರೇಷ್ಠ” ಎಂದು ಗೋಚರವಾಯಿತು.</verse>
				<verse number="14">“ಜ್ಞಾನಿಗೆ ಹಣೆಯಲ್ಲಿ ಕಣ್ಣು, ಮೂಢನೋ ಕತ್ತಲೆಯಲ್ಲಿ ನಡೆಯುತ್ತಾನೆ\. ಆದರೆ ಇವರಿಬ್ಬರ ಗತಿ ಒಂದೇ ಎಂದು ಕಂಡುಬಂದಿತು.</verse>
				<verse number="15">“ಮೂಢನಿಗೆ ಸಂಭವಿಸುವ ಗತಿ ನನಗೂ ಸಂಭವಿಸುವುದಾದರೆ ನನ್ನ ಹೆಚ್ಚಿನ ಜ್ಞಾನದಿಂದ ಪ್ರಯೋಜನವೇನು? ಇದೂ ವ್ಯರ್ಥವೇ!” ಎಂದುಕೊಂಡೆ.</verse>
				<verse number="16">ಏಕೆಂದರೆ ಮೂಢನನ್ನು ಹೇಗೋ ಹಾಗೆಯೇ ಜ್ಞಾನಿಯನ್ನೂ ಜನರು ನಿರಂತರವಾಗಿ ಮರೆತುಹೋಗುವರು. ಮುಂದಿನ ಕಾಲದವರು ಈಗಿನವರನ್ನೆಲ್ಲ ಮರೆತುಬಿಡುವರು ಎಂಬುದು ನಿಶ್ಚಯ. ನಿಸ್ಸಂದೇಹವಾಗಿ ಮೂಢನಂತೆ ಜ್ಞಾನಿಯು ಮೃತನಾಗುವನು.</verse>
				<verse number="17">ಲೋಕದ ಆಗುಹೋಗುಗಳು ಕೇಡಿಗೆ ಈಡಾಗುವುವೆಂದು ನನಗೆ ಕಂಡುಬಂದಿತು. ಜೀವನವೇ ನೀರಸವೆಂದು ನನಗೆ ತೋಚಿತು; ಗಾಳಿಯನ್ನು ಹಿಡಿಯಲು ಬೆನ್ನಟ್ಟಿಹೋದಂತೆ ಸಮಸ್ತವೂ ವ್ಯರ್ಥವೇ ಸರಿ!</verse>
				<verse number="18">ನನ್ನ ದುಡಿಮೆಯ ಫಲವನ್ನು ಮುಂದಿನವನಿಗೆ ಬಿಟ್ಟುಬಿಡಬೇಕಲ್ಲಾ ಎಂದು ಲೋಕದಲ್ಲಿ ನಾನು ಪಟ್ಟ ಪ್ರಯಾಸದ ಬಗ್ಗೆ ಬೇಸರಗೊಂಡೆ.</verse>
				<verse number="19">ನನ್ನ ನಂತರ ಬರುವವನು ಜ್ಞಾನಿಯೋ ಮೂಢನೋ ಯಾರಿಗೆ ಗೊತ್ತು? ಅವನು ಎಂಥವನಾದರೂ ನಾನು ಲೋಕದಲ್ಲಿ ಬುದ್ಧಿ ಖರ್ಚುಮಾಡಿ ಗಳಿಸಿದ ದುಡಿಮೆಯ ಫಲಕ್ಕೆಲ್ಲ ಅವನು ಒಡೆಯನಾಗುತ್ತಾನೆ. ಇದು ಸಹ ವ್ಯರ್ಥವೇ.</verse>
				<verse number="20">ಹೀಗಿರಲು, ನಾನು ಲೋಕದಲ್ಲಿ ಕಷ್ಟಪಟ್ಟು ಗಳಿಸಿದ ದುಡಿಮೆಯ ಬಗ್ಗೆ ನಿರಾಶೆಗೊಂಡೆ.</verse>
				<verse number="21">ಒಬ್ಬನು ಜ್ಞಾನದಿಂದಲೂ ತಿಳುವಳಿಕೆ ಇಂದಲೂ ಕೆಲಸಮಾಡಿ ಕಾರ್ಯವನ್ನು ಸಿದ್ಧಿಗೆ ತಂದಮೇಲೆ, ಅದಕ್ಕಾಗಿ ಪ್ರಯಾಸಪಡದವನಿಗೆ ಅದನ್ನು ವಾರಸುದಾರನಾಗಿ ಬಿಡಬೇಕಾಗುತ್ತದೆ. ಇದು ಸಹ ವ್ಯರ್ಥವಲ್ಲವೆ? ಇದು ಅನ್ಯಾಯವಲ್ಲವೇ?</verse>
				<verse number="22">ಲೋಕದಲ್ಲಿ ಮಾನವನು ಹೃತ್ಪೂರ್ವಕವಾಗಿ ಪಡುವ ಪ್ರಯಾಸದಿಂದ ಅವನಿಗೆ ಸಿಗುವ ಲಾಭವಾದರೂ ಏನು?</verse>
				<verse number="23">ಅವನ ಮನಸ್ಸಿಗೆ ನೆಮ್ಮದಿ ಇಲ್ಲ, ಇದು ಸಹ ವ್ಯರ್ಥವೇ ಸರಿ.</verse>
				<verse number="24">ತಿಂದು, ಕುಡಿದು, ತನ್ನ ದುಡಿಮೆಯಲ್ಲೇ ಸುಖವನ್ನು ಅನುಭವಿಸುವುದಕ್ಕಿಂತ ಮೇಲಾದುದು ಮನುಷ್ಯನಿಗೆ ಯಾವುದು ಇಲ್ಲ. ಇದು ದೇವರಿಂದ ಆದುದು ಎಂದು ಮನಗಂಡೆ.</verse>
				<verse number="25">ದೇವರಿಲ್ಲದೆ ಯಾರಿಗೆ ಊಟ ದೊರಕೀತು? ಅವರಿಲ್ಲದೆ ಸುಖಾನುಭವ ಯಾರಿಗೆ ದೊರಕೀತು?</verse>
				<verse number="26">ದೇವರು ತಾವು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳುವಳಿಕೆಯನ್ನೂ, ಸುಖಸಂತೋಷವನ್ನೂ ದಯಪಾಲಿಸುತ್ತಾರಲ್ಲವೇ? ಪಾಪಿಗಾದರೋ, ಪ್ರಯೋಜನಕರವಾದುವುಗಳನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ವಿಧಿಸಿದ್ದಾರೆ. ಆದರೆ ಅವು ತಮಗೆ ಮೆಚ್ಚುಗೆಯಾದವರಿಗೆ ಸೇರಬೇಕಾದವು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.</verse>
			</chapter>
			<chapter number="3">
				<verse number="1">ಪ್ರತಿಯೊಂದು ಕಾಲಕ್ಕೂ ನಿಗದಿಯಾದ ಕಾಲವಿದೆ. ಜಗತ್ತಿನಲ್ಲಿ ನಡೆಯುವ ಒಂದೊಂದು ಕೆಲಸಕ್ಕೂ ಸೂಕ್ತ ಸಮಯವಿದೆ:</verse>
				<verse number="2">ಹುಟ್ಟುವ ಸಮಯ, ಸಾಯುವ ಸಮಯ ನೆಡುವ ಸಮಯ, ನೆಟ್ಟದ್ದನ್ನು ಕೀಳುವ ಸಮಯ.</verse>
				<verse number="3">ಕೊಲ್ಲುವ ಸಮಯ, ಗುಣಪಡಿಸುವ ಸಮಯ ಕೆಡವಿಬಿಡುವ ಸಮಯ, ಕಟ್ಟಿ ಎಬ್ಬಿಸುವ ಸಮಯ.</verse>
				<verse number="4">ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ.</verse>
				<verse number="5">ಕಲ್ಲುಗಳನ್ನು ಬಿಸಾಡುವ ಸಮಯ, ಕಲ್ಲುಗಳನ್ನು ಕೂಡಿಸಿಡುವ ಸಮಯ ಆಲಿಂಗನ ಮಾಡುವ ಸಮಯ, ಆಲಿಂಗನ ಮಾಡದ ಸಮಯ.</verse>
				<verse number="6">ಗಳಿಸುವ ಸಮಯ, ಕಳೆದುಕೊಳ್ಳುವ ಸಮಯ ಕಾಪಾಡುವ ಸಮಯ, ಬಿಸಾಡುವ ಸಮಯ.</verse>
				<verse number="7">ಹರಿಯುವ ಸಮಯ, ಹೊಲಿಯುವ ಸಮಯ ಸುಮ್ಮನಿರುವ ಸಮಯ, ಮಾತಾಡುವ ಸಮಯ.</verse>
				<verse number="8">ಪ್ರೀತಿಸುವ ಸಮಯ, ದ್ವೇಷಿಸುವ ಸಮಯ ಯುದ್ಧಮಾಡುವ ಸಮಯ, ಸಮಾಧಾನಮಾಡುವ ಸಮಯ. ಹೀಗೆ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು.</verse>
				<verse number="9">ಕಷ್ಟಪಟ್ಟು ಮಾಡುವ ದುಡಿಮೆಯಿಂದ ಒಬ್ಬನಿಗೆ ಸಿಗುವ ಲಾಭವಾದರೂ ಏನು?</verse>
				<verse number="10">ನರಮಾನವರ ಕರ್ತವ್ಯವೆಂದು ದೇವರು ವಿಧಿಸಿರುವ ದುಡಿಮೆಯನ್ನು ನಾನು ಗಮನಿಸಿದ್ದೇನೆ.</verse>
				<verse number="11">ಒಂದೊಂದು ವಸ್ತುವನ್ನೂ ಸಮಯಕ್ಕೆ ತಕ್ಕಂತೆ ಸುಂದರವಾಗಿ ನಿರ್ಮಿಸಿದ್ದಾರೆ ದೇವರು. ಇದಲ್ಲದೆ, ಮನುಷ್ಯನ ಹೃದಯದಲ್ಲಿ ಅಮರತ್ವದ ಪ್ರತಿಯನ್ನು ಮೂಡಿಸಿದ್ದಾರೆ.</verse>
				<verse number="12">ಮನುಷ್ಯರು ತಮ್ಮ ಇಡೀ ಜೀವಮಾನದಲ್ಲಿ ಸುಖಸಂತೋಷವನ್ನು ಅನುಭವಿಸುವುದಕ್ಕಿಂತ ಮೇಲಾದುದು ಅವರಿಗೆ ಯಾವುದೂ ಇಲ್ಲ ಎಂಬುದನ್ನು ನಾನು ಗ್ರಹಿಸಿದ್ದೇನೆ.</verse>
				<verse number="13">ಅಲ್ಲದೆ, ಪ್ರತಿಯೊಬ್ಬನು ಅನ್ನಪಾನಗಳನ್ನು ಸೇವಿಸಿ, ತನ್ನ ನಾನಾತರದ ದುಡಿಮೆಗಳಲ್ಲೂ ಸುಖವನ್ನು ಅನುಭವಿಸುವುದು ದೇವರ ಅನುಗ್ರಹವೇ ಎಂದು ನನಗೆ ತಿಳಿದಿದೆ.</verse>
				<verse number="14">ದೇವರ ಕಾರ್ಯವೆಲ್ಲವು ಶಾಶ್ವತವಾದುದು ಎಂದು ಬಲ್ಲೆ. ಅದಕ್ಕೆ ಯಾವುದನ್ನೂ ಸೇರಿಸಲಾಗದು. ಅದರಿಂದ ಯಾವುದನ್ನೂ ಕಳೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮಾನವರು ಭಯಭಕ್ತಿಯಿಂದ ಇರಬೇಕೆಂಬ ಕಾರಣದಿಂದಲೇ ದೇವರು ಹೀಗೆ ಮಾಡಿದ್ದಾರೆ.</verse>
				<verse number="15">ಈಗಿನದು ಹಿಂದೆ ಇತ್ತು; ಮುಂದಿನದು ಈಗಲೂ ಇದೆ; ಗತಿಸಿಹೋದದ್ದನ್ನು ದೇವರು ಮರಳಿ ಬರಮಾಡುವರು.</verse>
				<verse number="16">ಇದಲ್ಲದೆ, ನಾನು ಲೋಕವನ್ನು ದೃಷ್ಟಿಸಿನೋಡಿ ನ್ಯಾಯಸ್ಥಾನದಲ್ಲೂ ಧರ್ಮಸ್ಥಾನದಲ್ಲೂ ಅಧರ್ಮ ಇರುವುದನ್ನು ಗಮನಿಸಿದೆ.</verse>
				<verse number="17">ಆಗ ನಾನು ಮನಸ್ಸಿನಲ್ಲೇ, “ದೇವರು ಸಜ್ಜನರಿಗೂ ದುರ್ಜನರಿಗೂ ನ್ಯಾಯತೀರಿಸುವರು. ಅವರ ನ್ಯಾಯಕ್ರಮದಲ್ಲಿ ಎಲ್ಲ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟಲ್ಲವೆ?” ಎಂದುಕೊಂಡೆ.</verse>
				<verse number="18">ಮತ್ತೆ ಮನಸ್ಸಿನಲ್ಲೇ ಮಾನವರ ಪರಿಸ್ಥಿತಿಯ ಬಗ್ಗೆ ಆಲೋಚನೆ ಮಾಡಿದೆ; ಮನುಷ್ಯರು ಪಶುಗಳಿಗೆ ಸಮಾನರೆಂದು ತಾವೇ ಗ್ರಹಿಸಿಕೊಳ್ಳುವುದಕ್ಕೆ ಆಸ್ಪದವಾಗುವಂತೆ ದೇವರು ಮನುಷ್ಯರನ್ನು ಪರೀಕ್ಷಿಸುತ್ತಾರೆ.</verse>
				<verse number="19">ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ; ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುತ್ತದೆ. ಎಲ್ಲಕ್ಕೂ ಇರುವ ಪ್ರಾಣ ಒಂದೇ. ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ. ಎಲ್ಲವೂ ವ್ಯರ್ಥವೇ.</verse>
				<verse number="20">ಎಲ್ಲ ಪ್ರಾಣಿಗಳೂ ಒಂದೇ ಸ್ಥಳಕ್ಕೆ ಹೋಗುತ್ತವೆ. ಎಲ್ಲವೂ ಮಣ್ಣಿನಿಂದ ಆದವು, ಎಲ್ಲವೂ ಮರಳಿ ಮಣ್ಣಿಗೆ ಸೇರುತ್ತವೆ.</verse>
				<verse number="21">ಮನುಷ್ಯನ ಆತ್ಮ ಮೇಲಕ್ಕೆ ಏರುತ್ತದೋ? ಪಶುವಿನ ಆತ್ಮ ಕೆಳಕ್ಕೆ ಇಳಿದು ಭೂಮಿಗೆ ಸೇರುತ್ತದೋ? ಯಾರಿಗೆ ಗೊತ್ತು?”</verse>
				<verse number="22">ಈ ಪ್ರಕಾರ ನಾನು ಆಲೋಚಿಸಿ ಮನುಷ್ಯನು ತನ್ನ ಕೆಲಸಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಮೇಲಾದುದು ಯಾವುದೂ ಇಲ್ಲ. ಇದೇ ಅವನ ಪಾಲಿಗೆ ಬಂದುದು ಎಂದು ಗ್ರಹಿಸಿಕೊಂಡೆ. ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?</verse>
			</chapter>
			<chapter number="4">
				<verse number="1">ಇದಾದ ಮೇಲೆ ಈ ಜಗದಲ್ಲಿ ಎಲ್ಲಾ ತರದ ಚಿತ್ರಹಿಂಸೆಗಳನ್ನು ಕುರಿತು ಯೋಚಿಸಿದೆ. ಅಯ್ಯೋ, ಹಿಂಸೆಗೆ ಈಡಾದವರ ಕಣ್ಣೀರನ್ನು ಕುರಿತು ಏನೆಂದು ಹೇಳಲಿ? ಅವರನ್ನು ಸಂತೈಸುವವರು ಯಾರೂ ಇಲ್ಲ. ಹಿಂಸಾಚಾರಿಗಳು ಶಕ್ತಿಸಾಮರ್ಥ್ಯ ಉಳ್ಳವರು. ಸಂತೈಸುವವರಾದರೋ ಒಬ್ಬರೂ ಇರಲಿಲ್ಲ.</verse>
				<verse number="2">ಇದನ್ನು ನೋಡಿ ಜೀವದಿಂದ ಇರುವವರಿಗಿಂತ ಸತ್ತವರೇ ಧನ್ಯರೆಂದು ಹೊಗಳಿದೆ.</verse>
				<verse number="3">ಹೌದು, ಉಭಯರಿಗಿಂತಲೂ ಇನ್ನೂ ಹುಟ್ಟದೆ, ಜಗದಲ್ಲಿನ ಅಧರ್ಮವನ್ನು ಕಾಣದೆ ಇರುವವನು ಮತ್ತಷ್ಟು ಭಾಗ್ಯವಂತನೆಂದು ತಿಳಿದುಕೊಂಡೆ.</verse>
				<verse number="4">ಮಾನವನು ಪಡುವ ಸಮಸ್ತ ಪರಿಶ್ರಮವನ್ನು ಹಾಗೂ ಸಾಧಿಸುವ ಸಕಲ ಕಾರ್ಯಗಳನ್ನು ಅವಲೋಕಿಸಿದೆ. ಇವಕ್ಕೆಲ್ಲ ಪರರ ಬಗ್ಗೆ ಅವನಿಗಿರುವ ಮತ್ಸರವೇ ಕಾರಣವೆಂದು ತೋರಿಬಂತು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.</verse>
				<verse number="5">ಕೈಕಟ್ಟಿಕೊಂಡು ಕುಳಿತುಕೊಳ್ಳುವ ಮೈಗಳ್ಳನಾದ ಮೂಢನಿಗೆ ಅವನ ಒಡಲೇ ಊಟ.</verse>
				<verse number="6">ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ಎರಡು ಕೈಹಿಡಿ ವ್ಯರ್ಥ ಪರಿಶ್ರಮಕ್ಕಿಂತ ಒಂದೇ ಕೈಹಿಡಿಯಷ್ಟು ಸಂಪಾದನೆ ಪಡೆದು ನೆಮ್ಮದಿಯಿಂದಿರುವುದು ಲೇಸು.</verse>
				<verse number="7">ಲೋಕದಲ್ಲಿ ಮತ್ತೊಂದು ವ್ಯರ್ಥ ವಿಷಯವನ್ನು ಕಂಡೆ. ಒಬ್ಬಂಟಿಗನಾದ ಮನುಷ್ಯನೊಬ್ಬ ಇದ್ದ. ಅವನಿಗೆ ಅಣ್ಣತಮ್ಮಂದಿರು ಇರಲಿಲ್ಲ. ಮಕ್ಕಳುಮರಿ ಇರಲಿಲ್ಲ. ಆದರೂ ಅವನ ದುಡಿಮೆಗೆ ಎಲ್ಲೆ ಇರಲಿಲ್ಲ. ಆಸ್ತಿಪಾಸ್ತಿಯಿಂದ ಅವನ ಕಣ್ಣಿಗೆ ತೃಪ್ತಿ ಇರಲಿಲ್ಲ.</verse>
				<verse number="8">“ನಾನು ಸುಖಾನುಭವವನ್ನು ತೊರೆದು ಯಾರಿಗೋಸ್ಕರ ಒಂದೇ ಸಮನೆ ದುಡಿಯುತ್ತಾ ಇದ್ದೇನೆ?” ಎಂದುಕೊಂಡ. ಇದೂ ಕೂಡ ವ್ಯರ್ಥ, ಕೇವಲ ಪ್ರಯಾಸವೇ ಸರಿ.</verse>
				<verse number="9">ಒಬ್ಬನಿಗಿಂತ ಇಬ್ಬರು ಲೇಸು; ಅವರ ಪ್ರಯಾಸಕ್ಕೆ ಹೆಚ್ಚಿನ ಲಾಭ.</verse>
				<verse number="10">ಒಬ್ಬನು ಬಿದ್ದರೆ ಇನ್ನೊಬ್ಬನು ಎತ್ತುತ್ತಾನೆ; ಬಿದ್ದಾಗ ಎತ್ತುವವನು ಇಲ್ಲದಿದ್ದರೆ ಅವನ ಗತಿ ದುರ್ಗತಿಯೇ ಸರಿ.</verse>
				<verse number="11">ಇದಲ್ಲದೆ, ಒಬ್ಬನ ಮಗ್ಗುಲಲ್ಲಿ ಇನ್ನೊಬ್ಬನು ಮಲಗಿಕೊಂಡರೆ ಇಬ್ಬರಿಗೂ ಬೆಚ್ಚಗಾದೀತು!</verse>
				<verse number="12">ಒಬ್ಬಂಟಿಗನನ್ನು ಜಯಿಸಬಲ್ಲವನಿಗೆ ಇಬ್ಬರು ಕೂಡ ಎದುರಾಗಿ ನಿಲ್ಲಬಹುದು. ಮೂರು ಹುರಿಗಳಿಂದ ಹೆಣೆದ ಹಗ್ಗ ಸುಲಭವಾಗಿ ಕಿತ್ತುಹೋಗುವುದಿಲ್ಲ.</verse>
				<verse number="13">ಬುದ್ಧಿಮಾತಿಗೆ ಕಿವಿಗೊಡದ ಮೂರ್ಖನಾದ ಮುದಿಯರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು.</verse>
				<verse number="14">ಇಂಥ ಯುವಕನೊಬ್ಬನನ್ನು ರಾಜನನ್ನಾಗಿಸಲು ಸೆರೆಮನೆಯಿಂದ ಕರೆ ತರಲಾಯಿತು. ರಾಜ್ಯದಲ್ಲಿ ಒಬ್ಬ ಬಡ ಪ್ರಜೆಯಾಗಿ ಹುಟ್ಟಿದವನು ಆತ.</verse>
				<verse number="15">ಜಗತ್ತಿನಲ್ಲಿ ಬದುಕಿದ್ದ ಜೀವಂತರೆಲ್ಲರು ರಾಜನಿಗೆ ಪ್ರತಿಯಾಗಿ ನಿಂತ ಆ ಯುವಕನ ಪಕ್ಷ ವಹಿಸುವುದನ್ನು ಕಂಡೆ.</verse>
				<verse number="16">ಇವನ ಅಧಿಪತ್ಯಕ್ಕೆ ಒಳಪಟ್ಟ ಜನಜಂಗುಳಿಯ ಸಂಖ್ಯೆ ಅಪಾರವಾಗಿತ್ತು. ಇವನ ನಂತರ ಬಂದವರಾದರೋ ಇವನ ಬಗ್ಗೆ ಅಭಿಮಾನ ತೋರಲಿಲ್ಲ. ಇದು ಸಹ ವ್ಯರ್ಥ, ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.</verse>
			</chapter>
			<chapter number="5">
				<verse number="1">ನೀನು ದೇವಾಲಯವನ್ನು ಪ್ರವೇಶಿಸುವಾಗ ಎಚ್ಚರಿಕೆವಹಿಸು. ಮೂಢರು ಅರ್ಪಿಸುವ ಬಲಿಗಿಂತ ದೇವರ ಸಾನ್ನಿಧ್ಯ ಸೇರಿ ಕಿವಿಗೊಟ್ಟು ಆಲಿಸುವುದು ಲೇಸು. ತಾವು ಮಾಡುವುದು ಸರಿಯಲ್ಲ ಎಂದು ಆ ಮೂಢರಿಗೆ ತಿಳಿಯದು.</verse>
				<verse number="2">ದುಡುಕಿ ಮಾತನಾಡಬೇಡ. ದೇವರ ಸನ್ನಿಧಿಯಲ್ಲಿ ಮಾತುಕೊಡಲು ಆತುರಪಡಬೇಡ. ದೇವರು ಇರುವುದು ಪರಲೋಕದಲ್ಲಿ, ನೀನಿರುವುದಾದರೋ ಭೂಲೋಕದಲ್ಲಿ. ಆದುದರಿಂದ ನಿನ್ನ ಮಾತುಗಳಿಗೆ ಮಿತಿಯಿರಲಿ.</verse>
				<verse number="3">ಚಿಂತೆ ಹೆಚ್ಚಾದರೆ ಕನಸು ಕಾಣಿಸಿಕೊಳ್ಳುತ್ತದೆ. ಮಾತು ಹೆಚ್ಚಾದರೆ ಹುಚ್ಚುತನ ಹೊರಬರುತ್ತದೆ.</verse>
				<verse number="4">ದೇವರಿಗೆ ನೀನು ಹರಕೆಯನ್ನು ಹೊತ್ತರೆ ತೀರಿಸಲು ತಡಮಾಡಬೇಡ. ದೇವರು ಮೂಢರಿಗೆ ಒಲಿಯುವುದಿಲ್ಲ. ನಿನ್ನ ಹರಕೆಯನ್ನು ತಪ್ಪದೆ ತೀರಿಸು.</verse>
				<verse number="5">ಹರಕೆಮಾಡಿ ತೀರಿಸದೆ ಇರುವುದಕ್ಕಿಂತ ಹರಕೆ ಮಾಡಿಕೊಳ್ಳದಿರುವುದೇ ಲೇಸು.</verse>
				<verse number="6">ನಿನ್ನ ಬಾಯಿ ಪಾಪಕ್ಕೆ ಕಾರಣ ಆಗದಂತೆ ನೋಡಿಕೊ. ಅದು ಅಜಾಗ್ರತೆಯಿಂದ ಆಯಿತೆಂದು ದೇವದೂತನ ಮುಂದೆ ನೆಪ ಹೇಳಬೇಡ. ದೇವರು ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೆಲಸವನ್ನು ಹಾಳುಮಾಡಿಯಾರು.</verse>
				<verse number="7">ಕನಸುಗಳು ಎಷ್ಟೋ ಬೀಳಬಹುದು. ಮಾತುಕತೆಗಳು ಎಷ್ಟೋ ನಡೆಯಬಹುದು. ನೀನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿರು.</verse>
				<verse number="8">ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.</verse>
				<verse number="9">:ಸಾರ್ವಜನಿಕ ಒಳಿತು,” “ಅಧಿಪತಿಗಳ ಸೇವೆ” ಎಂದೆಲ್ಲ ಹೇಳುವರು.</verse>
				<verse number="10">ಹಣದಾಸೆಯುಳ್ಳವನಿಗೆ ಎಷ್ಟು ಹಣ ಇದ್ದರೂ ತೃಪ್ತಿಯಿಲ್ಲ. ಆಸ್ತಿ ಬಯಸುವವನಿಗೆ ಎಷ್ಟು ಆದಾಯವಿದ್ದರೂ ನೆಮ್ಮದಿಯಿಲ್ಲ. ಇದೂ ಸಹ ವ್ಯರ್ಥವೇ.</verse>
				<verse number="11">ಸಿರಿಸಂಪತ್ತು ಹೆಚ್ಚಿದಂತೆ ಅನುಭವಿಸುವವರ ಸಂಖ್ಯೆಯೂ ಹೆಚ್ಚುತ್ತದೆ. ಯಜಮಾನನಿಗೆ ತಾನು ಐಶ್ವರ್ಯವಂತನೆಂಬ ಭಾವನೆಯ ಹೊರತು ಮತ್ತಾವ ಲಾಭವು ಇಲ್ಲ.</verse>
				<verse number="12">ದುಡಿಯುವವನು ಸ್ವಲ್ಪ ತಿಂದರೂ ಸರಿ, ಹೆಚ್ಚು ತಿಂದರೂ ಸರಿ, ಹಾಯಾಗಿ ನಿದ್ರಿಸುತ್ತಾನೆ. ಐಶ್ವರ್ಯವಂತನ ಸಂಪತ್ತಾದರೋ ಅವನಿಗೆ ನಿದ್ರೆ ಬರಲು ಬಿಡುವುದಿಲ್ಲ.</verse>
				<verse number="13">ಲೋಕದಲ್ಲಿ ನಾನು ಮತ್ತೊಂದು ಕೇಡನ್ನು ಕಂಡೆ. ಅದೇನೆಂದರೆ, ಆಸ್ತಿವಂತನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲೇ ಕೊರಗುತ್ತಿರುತ್ತಾನೆ.</verse>
				<verse number="14">ಆ ಆಸ್ತಿ ನಿರರ್ಥಕ ಪ್ರಯತ್ನದಿಂದ ನಷ್ಟವಾಗುತ್ತದೆ. ಅವನಿಗೆ ಮಗನಿದ್ದರೆ, ಅವನಿಗೆ ಏನೂ ಇರುವುದಿಲ್ಲ.</verse>
				<verse number="15">ತಾಯಿಯ ಗರ್ಭದಿಂದ ಹೇಗೆ ಬರಿಗೈಯಲ್ಲಿ ಬಂದನೋ ಹಾಗೇ ಬರಿಗೈಯಲ್ಲಿ ಗತಿಸಿಹೋಗುತ್ತಾನೆ. ಅವನು ಪಟ್ಟ ಎಲ್ಲ ಪ್ರಯಾಸಕ್ಕಾಗಿ ತನ್ನ ಕೈಯಲ್ಲಿ ಏನನ್ನೂ ತೆಗೆದುಕೊಂಡು ಹೋಗುವುದಿಲ್ಲ.</verse>
				<verse number="16">ಬಂದಂತೆಯೇ ಹಿಂದಿರುಗಿ ಹೋಗುವನು. ಅವನು ಪಟ್ಟ ಪ್ರಯಾಸವೆಲ್ಲ ಗಾಳಿಗೆ ತೂರಿದಂತೆ ನಿರರ್ಥಕ, ಇದು ದುರದೃಷ್ಟಕರ.</verse>
				<verse number="17">ಅವನ ಜೀವಮಾನವೆಲ್ಲ ಅಂಧಕಾರಮಯ, ಅದರಲ್ಲಿ ದುಃಖದುಗುಡ, ರೋಗರುಜಿನ, ಕೋಪತಾಪ ಇದ್ದೇ ಇರುತ್ತವೆ.</verse>
				<verse number="18">ಇಗೋ, ನನಗೆ ಕಂಡುಬಂದ ಇನ್ನೊಂದು ವಿಷಯ: ದೇವರು ಮನುಷ್ಯನಿಗೆ ದಯಪಾಲಿಸಿರುವ ಅಲ್ಪಕಾಲಾವಧಿಯಲ್ಲಿ ಅವನು ತಿಂದು ಕುಡಿಯಬೇಕು. ಲೋಕದಲ್ಲಿ ಪಡಬೇಕಾದ ದುಡಿಮೆಯಲ್ಲೂ ಸುಖವನ್ನು ಅನುಭವಿಸಬೇಕು. ಇದು ಅವನಿಗೆ ಉಚಿತವಾದುದು. ಉತ್ತಮವಾದುದು. ಇದೇ ಅವನಿಗೆ ಬಂದಿರುವ ಪಾಲು.</verse>
				<verse number="19">ದೇವರು ಯಾರಿಗಾದರು ಆಸ್ತಿಪಾಸ್ತಿಯನ್ನು ದಯಪಾಲಿಸಿ, ಅದನ್ನು ಅನುಭವಿಸುವ, ಪಾಲಿಗೆ ಬಂದದ್ದನ್ನು ಸವಿಯುವ, ಶ್ರಮದಲ್ಲೂ ಸಂತೋಷಪಡುವ ಶಕ್ತಿಯನ್ನು ಕೊಟ್ಟಿದ್ದರೆ ಅದು ಅವನ ಭಾಗ್ಯ; ಅದು ದೇವರ ಅನುಗ್ರಹವೇ ಸರಿ.</verse>
				<verse number="20">ಇಂಥವನು ತನ್ನ ಜೀವನಾವಧಿಯನ್ನು ಗಣನೆಗೆ ತಂದುಕೊಳ್ಳನು. ಕಾರಣ, ಅವನು ತನ್ನ ಹೃದಯಾನಂದದಲ್ಲೇ ಮಗ್ನನಾಗಿರುವಂತೆ ದೇವರು ಮಾಡಿದ್ದಾರೆ.</verse>
			</chapter>
			<chapter number="6">
				<verse number="1">ಧರೆಯಲ್ಲಿ ಮಾನವರಿಗೆ ಬಂದೊದಗುವ ದೊಡ್ಡ ದುರವಸ್ಥೆ ಒಂದನ್ನು ಕಂಡೆ.</verse>
				<verse number="2">ಅದೇನು ಎಂದರೆ, ದೇವರು ಒಬ್ಬನಿಗೆ ಧನಸಂಪತ್ತನ್ನೂ ಘನತೆಗೌರವವನ್ನೂ ಅನುಗ್ರಹಿಸುತ್ತಾರೆ. ಅವನ ಇಷ್ಟಾರ್ಥಕ್ಕೆ ಯಾವ ಕೊರತೆಯೂ ಇಲ್ಲದಂತೆ ಮಾಡುತ್ತಾರೆ. ಆದರೆ ಅವನ್ನು ಅನುಭವಿಸುವುದಕ್ಕೆ‍ ಶಕ್ತಿಯನ್ನು ದೇವರು ಅವನಿಗೆ ಕೊಡುವುದಿಲ್ಲ. ಅವುಗಳನ್ನು ಮತ್ತೊಬ್ಬನು ಅನುಭವಿಸುತ್ತಾನೆ. ಇದೂ ಸಹ ನಿರರ್ಥಕ; ದೊಡ್ಡ ಪಿಡುಗು.</verse>
				<verse number="3">ಒಬ್ಬನು ನೂರಾರು ಮಕ್ಕಳನ್ನು ಪಡೆಯಬಹುದು, ಹಣ್ಣುಹಣ್ಣು ಮುದುಕನಾಗುವ ತನಕ ಬದುಕಬಹುದು. ಆದರೆ ಜೀವನದಲ್ಲಿ ಸುಖಾನುಭವ ಇಲ್ಲದೆ, ಉತ್ತರಕ್ರಿಯೆಯೂ ಇಲ್ಲದೆಹೋದರೆ ಏನು ಪ್ರಯೋಜನ? ಅವನಿಗಿಂತ ಗರ್ಭಸ್ರಾವದ ಪಿಂಡವೇ ಮೇಲು ಎಂದುಕೊಂಡೆ.</verse>
				<verse number="4">ಅದು ವ್ಯರ್ಥವಾಗಿ ಬರುತ್ತದೆ. ಕತ್ತಲಲ್ಲೇ ಮರೆಯಾಗುತ್ತದೆ. ಅದರ ಹೆಸರು ಕಾರಿರುಳು.</verse>
				<verse number="5">ಅದು ಸೂರ್ಯನನ್ನು ಕಂಡಿಲ್ಲ. ತಿಳುವಳಿಕೆಯೆಂಬುದು ಅದಕ್ಕೆ ಇಲ್ಲವೇ ಇಲ್ಲ. ಆದರೂ ಅದರ ನೆಮ್ಮದಿ ಸುಖಾನುಭವ ಇಲ್ಲದವನ ಪರಿಸ್ಥಿತಿಗಿಂತ ಮಿಗಿಲಾದುದು.</verse>
				<verse number="6">ಸಾವಿರ ವರ್ಷದ ಮೇಲೆ ಸಾವಿರ ವರ್ಷ ಬದುಕಿಯೂ ಸುಖವನ್ನು ಅನುಭವಿಸದಿದ್ದರೆ ಏನು ಪ್ರಯೋಜನ? ಇವೆರಡೂ ಒಂದೇ ಸ್ಥಳಕ್ಕೆ ಹೋಗುತ್ತವೆ, ಅಲ್ಲವೇ?</verse>
				<verse number="7">ಮಾನವನು ಪಡುವ ಪ್ರಯಾಸವೆಲ್ಲ ಅವನ ಹೊಟ್ಟೆಪಾಡಿಗಾಗಿಯೇ. ಆದರೂ ಅವನಿಗೆ ತೃಪ್ತಿಯಿಲ್ಲ.</verse>
				<verse number="8">ಜ್ಞಾನಿಯಾಗಲಿ, ಜನರ ಮುಂದೆ ಸಜ್ಜನನಾಗಿ ನಡೆಯಬಲ್ಲ ಬಡವನಾಗಲಿ, ಮೂಢನಿಗಿಂತ ಹೇಗೆ ಶ್ರೇಷ್ಠ?</verse>
				<verse number="9">ಬಗೆಬಗೆಯಾಗಿ ಬಯಸುವುದಕ್ಕಿಂತ ಕಣ್ಣೆದುರಿಗೆ ಇರುವುದನ್ನು ಅನುಭವಿಸುವುದೇ ಲೇಸು. ಆದರೆ ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ನಿರರ್ಥಕ.</verse>
				<verse number="10">ಈಗ ಇರುವ ಪ್ರತಿಯೊಂದು ಹಿಂದಿನಿಂದಲೇ ಹೆಸರುವಾಸಿಯಾಗಿದೆ. ಮನುಷ್ಯನು ಯಾರೆಂದು ಗೊತ್ತಿದೆ. ತನಗಿಂತ ಬಲಿಷ್ಠನ ಸಂಗಡ ವಾದಿಸಲು ಅವನಿಂದಾಗದು.</verse>
				<verse number="11">ಮಾತು ಹೆಚ್ಚಿದಷ್ಟೂ ಪರಿಣಾಮ ಕಡಿಮೆ. ಅದರಿಂದ ಮನುಷ್ಯನಿಗಾಗುವ ಪ್ರಯೋಜನವಾದರೂ ಏನು?</verse>
				<verse number="12">ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮಾನವನ ಜೀವಮಾನ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಹಿತವೆಂದು ಯಾರಿಗೆ ಗೊತ್ತು? ತಾನು ಕಾಲವಾದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಳ್ಳಲು ಸಾಧ್ಯ?</verse>
			</chapter>
			<chapter number="7">
				<verse number="1">ಸುಗಂಧ ತೈಲಕ್ಕಿಂತ ಒಳ್ಳೆಯ ಹೆಸರು ಲೇಸು, ಜನನದ ದಿನಕ್ಕಿಂತ ಮರಣದ ದಿನ ಲೇಸು.</verse>
				<verse number="2">ಔತಣ ನಡೆವ ಮನೆಗೆ ಹೋಗುವುದಕ್ಕಿಂತ ಗೋಳಾಟವಿರುವ ಮನೆಗೆ ಹೋಗುವುದು ಲೇಸು, ಎಲ್ಲಾ ಮಾನವರ ಅಂತಿಮ ಗತಿ ಸಾವೇ. ಜೀವಂತರು ಇದನ್ನು ಮನಸ್ಸಿನಲ್ಲಿಡುವರು.</verse>
				<verse number="3">ನಗೆಗಿಂತ ಅಳುವು ಲೇಸು; ಮುಖದಲ್ಲಿ ದುಃಖ, ಹೃದಯಕ್ಕೆ ಸುಖ..</verse>
				<verse number="4">ಜ್ಞಾನಿಯ ಹೃದಯ ಶೋಕದ ಆಲಯ; ಮೂಢನ ಹೃದಯ ಹಿಗ್ಗಿನ ನಿಲಯ.</verse>
				<verse number="5">ಅಜ್ಞಾನಿಗಳ ಸ್ತುತಿಗೀತೆಗಿಂತ ಸುಜ್ಞಾನಿಗಳ ಗದರಿಕೆ ಲೇಸು.</verse>
				<verse number="6">ಮೂಢರ ನಗೆಚಾಟಿಕೆ, ಮಡಕೆಯಡಿ ಉರಿವ ಮುಳ್ಳುಕಡ್ಡಿಯ ಚಟಪಟ. ಇದೂ ಸಹ ನಿರರ್ಥಕ.</verse>
				<verse number="7">ದಬ್ಬಾಳಿಕೆ ಬುದ್ಧಿವಂತನನ್ನೂ ಹುಚ್ಚನನ್ನಾಗಿಸುತ್ತದೆ; ಲಂಚಕೋರತನ ಅಂತರಂಗವನ್ನೂ ಕೆಡಿಸುತ್ತದೆ.</verse>
				<verse number="8">ಆದಿಗಿಂತ ಅಂತ್ಯ ಲೇಸು; ಗರ್ವಕ್ಕಿಂತ ತಾಳ್ಮೆ ಲೇಸು.</verse>
				<verse number="9">ತವಕಬೇಡ ಕೋಪಮಾಡಲಿಕ್ಕೆ; ಕೋಪಕ್ಕೆ ನೆಲೆ ಮೂಢನ ಎದೆ.</verse>
				<verse number="10">ಹಿಂದಿನ ಕಾಲ ಈ ಕಾಲಕ್ಕಿಂತ ಮೇಲಾದುದಕ್ಕೆ ಕಾರಣ ಕೇಳಬೇಡ; ಇದು ಬುದ್ಧಿವಂತನು ಕೇಳುವ ಪ್ರಶ್ನೆಯಲ್ಲ.</verse>
				<verse number="11">ಜ್ಞಾನವು ಆಸ್ತಿಗಿಂತ ಪ್ರಯೋಜನಕರ; ಜೀವಿತರಿಗೆ ಅದು ಎಷ್ಟೋ ಲಾಭಕರ.</verse>
				<verse number="12">ಧನವು ಹೇಗೋ ಹಾಗೆ ಜ್ಞಾನವೂ ಆಶ್ರಯ; ಜ್ಞಾನದ ವೈಶಿಷ್ಟ್ಯವೆಂದರೆ ಅದು ಜ್ಞಾನಿಗೆ ಜೀವದಾಯಕ.</verse>
				<verse number="13">ದೇವರ ಸೃಷ್ಟಿಕಾರ್ಯವನ್ನು ಗಮನಿಸು; ಅವರು ಸೊಟ್ಟಗೆ ಮಾಡಿದ್ದನ್ನು ನೆಟ್ಟಗೆ ಮಾಡುವವರು ಯಾರು?</verse>
				<verse number="14">ಸುಖದಿನದಲ್ಲಿ ಸಂತೋಷದಿಂದಿರು, ದುಃಖದಿನದಲ್ಲಿ ಆಲೋಚಿಸಿನೋಡು; ಮನುಷ್ಯನು ತನ್ನ ಆಯುಸ್ಸು ಕಳೆದ ಮೇಲೆ ಸಂಭವಿಸುವುದೇನೆಂದು ಗ್ರಹಿಸಲಾಗದಂತೆ ದೇವರು ಇವುಗಳನ್ನು ಒಂದರ ಮೇಲೊಂದನ್ನು ಬರಮಾಡುತ್ತಾರೆ.</verse>
				<verse number="15">ಸಜ್ಜನನು ಸದ್ಧರ್ಮಿಯಾಗಿ ಜೀವಿಸುತ್ತಾ ಗತಿಸಿಹೋಗುತ್ತಾನೆ; ದುರ್ಜನನಾದರೋ ಅಧರ್ಮದಲ್ಲಿ ಬಹುಕಾಲ ಬದುಕುತ್ತಾನೆ. ಇದನ್ನು ಎಲ್ಲಾ ನನ್ನ ನಿರರ್ಥಕ ಜೀವನದಲ್ಲಿ ಎಷ್ಟೋ ನೋಡಿದ್ದೇನೆ.</verse>
				<verse number="16">ಧರ್ಮಿಷ್ಠನಾಗಿ ಬಾಳುವುದರಲ್ಲಿ ಆಗಲಿ, ಜ್ಞಾನಾರ್ಜನೆಯಲ್ಲಾಗಲಿ ಮಿತಿಮೀರಿ ವರ್ತಿಸಬೇಡ; ನಿನ್ನನ್ನು ನೀನೇ ವಿನಾಶಕ್ಕೆ ಗುರಿಮಾಡಿಕೊಳ್ಳಬೇಡ.</verse>
				<verse number="17">ದುರ್ನಡತೆಯಲ್ಲೇ ಆಗಲಿ, ಬುದ್ಧಿಹೀನತೆಯಲ್ಲೇ ಆಗಲಿ ಮಿತಿಮೀರಿ ವರ್ತಿಸುವುದು ಸಲ್ಲ. ಕಾಲ ಬರುವ ಮೊದಲೇ ಸಾವಿಗೆ ತುತ್ತಾಗಬೇಡ.</verse>
				<verse number="18">ನೀನು ಒಂದನ್ನು ಹಿಡಿದುಕೊಂಡು ಇನ್ನೊಂದನ್ನೂ ಕೈಬಿಡದಿರುವುದು ಒಳಿತು. ದೇವರಲ್ಲಿ ಭಯಭಕ್ತಿಯುಳ್ಳವರು ಇವೆರೆಡರಿಂದಲೂ ಪಾರು.</verse>
				<verse number="19">ಹತ್ತು ಅಧಿಕಾರಿಗಳಿಂದ ಪಟ್ಟಣಕ್ಕೆ ಉಂಟಾಗುವ ದೃಢತೆಗಿಂತ ಜ್ಞಾನಿಗೆ ಜ್ಞಾನದಿಂದ ದೊರಕುವ ದೃಢತೆ ಹೆಚ್ಚು.</verse>
				<verse number="20">ಪಾಪಮಾಡದೆ ಧರ್ಮವನ್ನೇ ಆಚರಿಸುವ ಸತ್ಪುರುಷ ಜಗದಲ್ಲಿ ಇಲ್ಲವೇ ಇಲ್ಲ.</verse>
				<verse number="21">ಜನರು ಆಡುವ ಮಾತುಗಳನ್ನೆಲ್ಲ ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡ. ನಿನ್ನ ಆಳೂ ನಿನ್ನನ್ನು ಶಪಿಸುವುದು ಕಿವಿಗೆ ಬೀಳಬಹುದು.</verse>
				<verse number="22">ನೀನು ಕೂಡ ಅನೇಕ ವೇಳೆ ಇತರರನ್ನು ಶಪಿಸಿದ್ದೀ; ಇದಕ್ಕೆ ನಿನ್ನ ಮನಸ್ಸೇ ಸಾಕ್ಷಿ.</verse>
				<verse number="23">ಇದನ್ನೆಲ್ಲ ಜ್ಞಾನದಿಂದ ಪರೀಕ್ಷಿಸಿದೆ, ಜ್ಞಾನಿಯಾಗುತ್ತೇನೆಂದು ನಿರ್ಧರಿಸಿಕೊಂಡೆ. ಆದರೆ ಅದು ನನಗೆ ದೂರವಾಯಿತು.</verse>
				<verse number="24">ಮಹೋನ್ನತವೂ ನಿಗೂಢವೂ ಆದ ತತ್ವವನ್ನು ಅರಿತುಕೊಳ್ಳಬಲ್ಲವರಾರು?</verse>
				<verse number="25">ನಾನು ಮತ್ತೆ ಜ್ಞಾನವನ್ನೂ ಮೂಲತತ್ವವನ್ನೂ ಹುಡುಕಿ, ವಿಚಾರಿಸಿ, ಗ್ರಹಿಸಿಕೊಳ್ಳಲು ಆಶಿಸಿದೆ; ಅಧರ್ಮವು ಮೂಢತನ, ಅಜ್ಞಾನವು ಹುಚ್ಚುತನ ಎಂದು ತಿಳಿದುಕೊಳ್ಳಲು ಮನಸ್ಸುಮಾಡಿದೆ.</verse>
				<verse number="26">ಸಾವಿಗಿಂತ ಹೆಚ್ಚು ವಿಷಕರವಾದ ವಿಷಯವೊಂದು ನನಗೆ ಕಂಡುಬಂದಿತು. ಅದು ಯಾವುದೆಂದರೆ - ಕೆಟ್ಟ ಹೆಂಗಸು. ಅವಳು ತೋರಿಸುವ ಪ್ರೀತಿ ಒಂದು ಬೋನು, ಸಿಕ್ಕಿಸಿಕೊಳ್ಳುವ ಒಂದು ಬಲೆ; ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯಾದರೋ ಅವಳ ಕೈಗೆ ಸಿಕ್ಕಿಬೀಳುವನು.</verse>
				<verse number="27">“ಹೌದು, ಒಂದಾದ ಮೇಲೊಂದನ್ನು ಆಲೋಚಿಸಿ ನಾನು ಇದನ್ನು ಕಂಡುಹಿಡಿದೆ” ಎನ್ನುತ್ತಾನೆ ಉಪದೇಶಕ. ಮತ್ತೊಂದು ಸಂಶೋಧನೆಯನ್ನು ಎಷ್ಟು ನಡೆಸಿದರೂ ನನಗೆ ಉತ್ತರ ಸಿಕ್ಕಲಿಲ್ಲ.</verse>
				<verse number="28">ಸಹಸ್ರಪುರುಷರಲ್ಲಿ ಯೋಗ್ಯ ಎನ್ನ ತಕ್ಕ ಒಬ್ಬನನ್ನು ಕಂಡಿದ್ದರೂ ಕಂಡಿರಬಹುದು; ಮೇಲಾದ ಹೆಂಗಸು ಎನ್ನತಕ್ಕವಳು ಸಿಕ್ಕಲಿಲ್ಲ.</verse>
				<verse number="29">ಇದೊಂದು ನಿನಗೆ ತಿಳಿದಿರಲಿ: ದೇವರು ಮನುಷ್ಯರನ್ನು ಸಜ್ಜನರನ್ನಾಗಿ ಸೃಷ್ಟಿಸಿದರು; ಮನುಷ್ಯರಾದರೂ ಅನೇಕ ಸಮಸ್ಯೆಗಳನ್ನು ಕಲ್ಪಿಸಿಕೊಂಡಿದ್ದಾರೆ. ನನಗೆ ಕಂಡುಬಂದುದು ಇದುವೇ.</verse>
			</chapter>
			<chapter number="8">
				<verse number="1">ಜ್ಞಾನಿಗೆ ಸಮಾನರು ಯಾರು? ಅವನಲ್ಲದೆ ಬಗೆಹರಿಸಬಲ್ಲವರು ಯಾರು? ಜ್ಞಾನವು ಮನುಷ್ಯನ ಮುಖವನ್ನು ವಿಕಾಸಗೊಳಿಸುತ್ತದೆ; ಗಂಟುಮೋರೆಯನ್ನು ಮಾರ್ಪಡಿಸುತ್ತದೆ.</verse>
				<verse number="2">ದೇವರ ಮೇಲೆ ಇಟ್ಟ ಆಣೆಯ ನಿಮಿತ್ತ ಅರಸನ ಆಜ್ಞೆಯನ್ನು ಕೈಗೊಳ್ಳಬೇಕೆಂಬುದು ನನ್ನ ಬೋಧೆ.</verse>
				<verse number="3">ದುಡುಕುತನದಿಂದ ಅರಸನಿಗೆ ಬೆನ್ನು ತೋರಿಸಬೇಡ; ಕೆಟ್ಟ ವಿಷಯದಲ್ಲಿ ಹಟಮಾಡಬೇಡ. ಆತನು ತನಗಿಷ್ಟಬಂದಂತೆ ಮಾಡಬಲ್ಲನು.</verse>
				<verse number="4">ಅರಸನ ಮಾತು ಅಧಿಕಾರದಿಂದ ಕೂಡಿದೆ. “ನೀನು ಮಾಡುವುದೇನು?” ಎಂದು ಅವನನ್ನು ಪ್ರಶ್ನಿಸುವವರಾರು?</verse>
				<verse number="5">ರಾಜಾಜ್ಞೆಯನ್ನು ಪಾಲಿಸುವವನಿಗೆ ಕೇಡು ಸಂಭವಿಸದು. ಅದನ್ನು ಯಾವಾಗ, ಹೇಗೆ ಪಾಲಿಸಬೇಕೆಂದು ಜ್ಞಾನಿಗೆ ಮನದಟ್ಟಾಗಿರುತ್ತದೆ.</verse>
				<verse number="6">ಪ್ರತಿಯೊಂದು ಕಾರ್ಯಕ್ಕೆ ಒಂದು ಕಾಲ, ಒಂದು ಕ್ರಮ ಇರುತ್ತದೆಯಲ್ಲವೆ? ಮನುಷ್ಯನು ಎದುರಿಸಬೇಕಾದ ಕಷ್ಟಕಾರ್ಪಣ್ಯಗಳು ಘನತರವಾದುವು.</verse>
				<verse number="7">ಮುಂದೆ ಆಗುವುದೇನು ಎಂಬುದು ಅವನಿಗೆ ಗೊತ್ತಿಲ್ಲ; ಅದು ಹೇಗೆ ಸಂಭವಿಸುವುದು ಎಂದು ಅವನಿಗೆ ತಿಳಿಸಬಲ್ಲವರು ಯಾರೂ ಇಲ್ಲ.</verse>
				<verse number="8">ಆತ್ಮವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಸಾವೆಂಬ ಸಮರಕ್ಕೆ ವಿರಾಮವಿಲ್ಲ; ಅಂತೆಯೇ ದುಷ್ಟತನದ ಮೂಲಕ ಅದರಿಂದ ತಪ್ಪಿಸಿಕೊಳ್ಳಲಾಗದು.</verse>
				<verse number="9">ಈ ಲೋಕದಲ್ಲಿ ನಡೆಯುವ ಆಗುಹೋಗುಗಳನ್ನೆಲ್ಲ ಚಿಂತಿಸಿ ನೋಡಿದಾಗ ಈ ವಿಷಯಗಳು ಕಂಡುಬಂದವು: ಈಗ ಒಬ್ಬನು ಮತ್ತೊಬ್ಬನ ಮೇಲೆ ದಬ್ಬಾಳಿಕೆ ನಡೆಸುತ್ತಾನೆ; ಹಾನಿಯನ್ನು ಉಂಟುಮಾಡುತ್ತಾನೆ.</verse>
				<verse number="10">ಇದಲ್ಲದೆ ದುರ್ಜನರು ಸತ್ತು ಸಮಾಧಿಯಾಗುವುದನ್ನು ನೋಡಿದ್ದೇನೆ. ಸಜ್ಜನರು ಆ ಪವಿತ್ರ ಸ್ಥಾನದಿಂದ ಹೊರಟುಬಂದು ಆ ದುರ್ಜನರ ನಡತೆಯನ್ನು ಅವರಿದ್ದ ಪಟ್ಟಣದಲ್ಲೇ ಹೊಗಳುತ್ತಾರೆ! ಇದು ನಿರರ್ಥಕ.</verse>
				<verse number="11">ಕೆಟ್ಟದ್ದನ್ನು ಮಾಡಲು ನರಮಾನವರು ತುಂಬ ಆಸಕ್ತಿ ಉಳ್ಳವರಾಗಿದ್ದಾರೆ. ಕೇಡಿಗೆ ತಕ್ಕ ದಂಡನೆಯನ್ನು ಕೂಡಲೆ ವಿಧಿಸದಿರುವುದೇ ಇದಕ್ಕೆ ಕಾರಣ.</verse>
				<verse number="12">ಪಾಪಾತ್ಮನು ನೂರು ಸಾರಿ ಕೆಟ್ಟದ್ದನ್ನು ಮಾಡಿ ದೀರ್ಘಕಾಲ ಬದುಕಿದರೂ ದೇವರಿಗೆ ಹೆದರಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.</verse>
				<verse number="13">ದೇವರಿಗೆ ಹೆದರದ ದುರ್ಜನನಿಗೆ ಒಳ್ಳೆಯದಾಗದೆಂಬುದು ನಿಶ್ಚಯ. ನೆರಳಿನಂತಿರುವ ಅವನ ಬಾಳಿನ ದಿನಗಳು ಹೆಚ್ಚುವುದಿಲ್ಲ.</verse>
				<verse number="14">ಲೋಕದಲ್ಲಿ ನಡೆಯುವ ನಿರರ್ಥಕ ಕಾರ್ಯ ಒಂದುಂಟು; ದುರ್ಜನರ ನಡತೆಗೆ ಆಗಬೇಕಾದ ತಕ್ಕ ಶಿಕ್ಷೆ ಸಜ್ಜನರಿಗೆ ಆಗುತ್ತದೆ. ಸಜ್ಜನರಿಗೆ ಸಿಗಬೇಕಾದ ಸಂಭಾವನೆ ದುರ್ಜನರಿಗೆ ಸಿಗುತ್ತದೆ. ಇದು ನಿರರ್ಥಕವೆಂದೇ ಹೇಳುತ್ತೇನೆ.</verse>
				<verse number="15">ಆದುದರಿಂದಲೇ ಸಂತೋಷವನ್ನು ಶ್ಲಾಘಿಸುತ್ತೇನೆ. ಮನುಷ್ಯನು ಅನ್ನಪಾನಗಳನ್ನು ಸೇವಿಸಿ ಸಂತೋಷಪಡುವುದಕ್ಕಿಂತ ಮೇಲಾದುದು ಅವನಿಗೆ ಈ ಲೋಕದಲ್ಲಿ ಇನ್ನಾವುದೂ ಇಲ್ಲ. ದೇವರು ಅವನಿಗೆ ಇಹದಲ್ಲಿ ಅನುಗ್ರಹಿಸುವ ಜೀವಾವಧಿಯಲ್ಲಿ ಅವನು ಪಡುವ ಪ್ರಯಾಸಕ್ಕೆ ಸುಖಾನುಭವ ಸೇರಿರುತ್ತದೆ.</verse>
				<verse number="16">ನಾನು ಜ್ಞಾನವನ್ನು ಪಡೆಯಲು, ಜಗದಲ್ಲಿ ನಡೆಯುವುದನ್ನು ಅರಿತುಕೊಳ್ಳಲು ಪ್ರಯತ್ನಿಸಿದಾಗ ಇದು ನನಗೆ ಮನದಟ್ಟಾಯಿತು: ಒಬ್ಬನು ರಾತ್ರಿ ಹಗಲು, ಕಣ್ಣುಗಳಿಗೆ ನಿದ್ರೆ ಹಚ್ಚಗೊಡದೆ ಪರಿಶೀಲಿಸಿದರೂ ದೇವರ ಕಾರ್ಯವನ್ನು ಅರ್ಥಮಾಡಿಕೊಳ್ಳಲು ಆಗದು.</verse>
				<verse number="17">ಎಷ್ಟು ಪ್ರಯಾಸಪಟ್ಟು ವಿಚಾರಿಸಿದರೂ ಅವನಿಂದ ಸಾಧ್ಯವಾಗದು. ಹೌದು, ಜ್ಞಾನಿ ತನ್ನಿಂದಾಗುತ್ತದೆ ಎಂದು ಹೇಳಿಕೊಳ್ಳಬಹುದು; ಆದರೆ ಅವನಿಂದಲೂ ಅದು ಸಾಧ್ಯವಾಗದು.</verse>
			</chapter>
			<chapter number="9">
				<verse number="1">ನಾನು ಇವೆಲ್ಲವನ್ನು ಪರ್ಯಾಲೋಚಿಸಿ ಇದನ್ನು ಮನಗಂಡೆ: ಸತ್ಪುರುಷರ ಹಾಗೂ ಸುಜ್ಞಾನಿಗಳ ಕಾರ್ಯಗಳೆಲ್ಲವೂ ದೇವರ ಕೈಯಲ್ಲಿವೆ. ತಾವು ಪ್ರೀತಿಗೆ ಪಾತ್ರರೋ ದ್ವೇಷಕ್ಕೆ ಅರ್ಹರೋ ಮಾನವರಿಗೆ ತಿಳಿಯದು. ಮುಂದೆ ಏನು ಕಾದಿದೆ ಎಂಬುದು ಯಾರಿಗೂ ಗೊತ್ತಿಲ್ಲ.</verse>
				<verse number="2">ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು; ಸಜ್ಜನನಿಗೂ ದುರ್ಜನನಿಗೂ, ಒಳ್ಳೆಯವನಿಗೂ (ಕೆಟ್ಟವನಿಗೂ), ಶುದ್ಧನಿಗೂ, ಅಶುದ್ಧನಿಗೂ ಬಲಿಯನ್ನರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿ ಕಾದಿದೆ; ನಿರ್ದೋಷಿಯಂತೆ ದೋಷಿಯೂ ಇರುವನು; ಆಣೆಯಿಡುವವನ ಹಾಗೆ ಆಣೆಗೆ ಅಂಜುವವನೂ ಇರುವನು.</verse>
				<verse number="3">ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕ ವ್ಯವಹಾರಗಳಲ್ಲೆಲ್ಲಾ ಸೇರಿಕೊಂಡಿದೆ. ಇದಲ್ಲದೆ, ನರಮಾನವರ ಎದೆಯಲ್ಲಿ ಕೆಟ್ಟತನ ತುಂಬಿದೆ; ಅವರು ಬದುಕಿರುವ ತನಕ ಮರುಳುತನ ಅವರ ಮನಸ್ಸನ್ನು ಸೆರೆಹಿಡಿದಿರುತ್ತದೆ. ಅನಂತರ ಸತ್ತವರನ್ನು ಸೇರಿಕೊಳ್ಳುತ್ತಾರೆ.</verse>
				<verse number="4">ಜೀವಿತರ ಗುಂಪಿಗೆ ಸೇರಿದವನಿಗೆ ನಂಬಿಕೆ-ನಿರೀಕ್ಷೆಯುಂಟು; ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು.</verse>
				<verse number="5">ಜೀವಿತರಿಗೆ ಖಂಡಿತವಾಗಿ ಸಾಯುತ್ತೇವೆಂಬ ತಿಳುವಳಿಕೆಯಾದರೂ ಉಂಟು. ಸತ್ತವರಿಗಾದರೋ ಯಾವ ತಿಳುವಳಿಕೆಯೂ ಇಲ್ಲ; ಅವರಿಗೆ ಇನ್ನು ಮೇಲೆ ಯಾವ ಪ್ರತಿಫಲವೂ ಇಲ್ಲ; ಅವರ ಹೆಸರನ್ನೂ ಜನರು ಮರೆತುಬಿಡುತ್ತಾರೆ.</verse>
				<verse number="6">ಅವರ ಪ್ರೀತಿ, ದ್ವೇಷ, ಮತ್ಸರ, ಅವರು ಸತ್ತಾಗಲೇ ಅಳಿದುಹೋಗುತ್ತವೆ. ಇಹಲೋಕದಲ್ಲಿ ನಡೆಯುವ ಯಾವುದರಲ್ಲೂ ಅವರಿಗೆ ಇನ್ನೆಂದಿಗೂ ಪಾಲಿರುವುದಿಲ್ಲ.</verse>
				<verse number="7">ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ತಿನ್ನು; ದ್ರಾಕ್ಷಾರಸವನ್ನು ಉಲ್ಲಾಸದಿಂದ ಕುಡಿ; ದೇವರು ನಿನ್ನ ನಡತೆಯನ್ನು ಈಗಾಗಲೇ ಮೆಚ್ಚಿಕೊಂಡಿದ್ದಾರೆ.</verse>
				<verse number="8">ನಿನ್ನ ಬಟ್ಟೆಗಳು ಬೆಳ್ಳಗಿರಲಿ, ತಲೆಗೆ ಎಣ್ಣೆಯ ಕೊರತೆ ಇಲ್ಲದಿರಲಿ.</verse>
				<verse number="9">ಲೋಕದಲ್ಲಿ ದೇವರು ವಿಧಿಸಿರುವ ಈ ನಿರರ್ಥಕ ಜೀವಮಾನದ ನಿರರ್ಥಕ ದಿನದಿನವೂ ನಿನ್ನ ಪ್ರಿಯ ಪತ್ನಿಯೊಡನೆ ಸುಖದಿಂದ ಬದುಕು; ಇಹಲೋಕದ ನಿನ್ನ ಬಾಳಿನಲ್ಲಿ ನೀನು ಪಡುವ ಪಾಡಿಗೆ ಇದೇ ನಿನ್ನ ಪಾಲಿಗೆ ಬಂದ ಪಂಚಾಮೃತ.</verse>
				<verse number="10">ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.</verse>
				<verse number="11">ಲೋಕದಲ್ಲಿ ನಾನು ಇನ್ನೊಂದು ವಿಷಯವನ್ನು ಗಮನಿಸಿದೆ; ಓಟ ಪಂದ್ಯದಲ್ಲಿ ವೇಗವಾಗಿ ಓಡುವವನೇ ಯಾವಾಗಲೂ ಗೆಲ್ಲುವನು ಎನ್ನುವಂತಿಲ್ಲ; ಬಲಿಷ್ಠರಿಗೇ ಯುದ್ಧದಲ್ಲಿ ಜಯಗಿಟ್ಟುತ್ತದೆ ಎನ್ನುವಹಾಗಿಲ್ಲ. ಜ್ಞಾನಿಗೆ ಜೀವನಾಂಶ ದೊರಕುವುದು, ಜಾಣನಿಗೆ ಹಣ ಲಭಿಸುವುದು, ಪ್ರವೀಣನಿಗೆ ಪಟ್ಟಪದವಿ ಸಿಕ್ಕುವುದು ಎನ್ನುವಂತಿಲ್ಲ. ಇವರೆಲ್ಲರೂ ಸಮಯ ಸಂದರ್ಭಗಳಿಗೆ ಒಳಪಟ್ಟಿರುತ್ತಾರೆ.</verse>
				<verse number="12">ತನ್ನ ನಿಶ್ಚಿತಕಾಲ ಯಾವಾಗ ಬರುವುದೆಂದು ಮಾನವನಿಗೆ ತಿಳಿಯದು. ಮೀನುಗಳು ಮೋಸಬಲೆಗೂ, ಹಕ್ಕಿಗಳು ಉರುಲುಬಲೆಗೂ, ಸಿಕ್ಕಿ ಬೀಳುವಂತೆ ನರಮಾನವರು ತಮ್ಮ ಮೇಲೆ ತಟ್ಟನೆ ಬೀಳುವ ಕಾಲಪಾಶಕ್ಕೆ ಸಿಕ್ಕಿಕೊಳ್ಳುತ್ತಾರೆ.</verse>
				<verse number="13">ಲೋಕದಲ್ಲಿ ನಾನು ಜ್ಞಾನವನ್ನು ಈ ವಿಧವಾಗಿ ಮನಗಂಡೆ; ಅದು ನನ್ನ ದೃಷ್ಟಿಗೆ ದೊಡ್ಡದಾಗಿ ಕಾಣಿಸಿತು.</verse>
				<verse number="14">ಇಗೋ, ಒಂದು ಚಿಕ್ಕ ಪಟ್ಟಣ. ಅದರಲ್ಲಿ ಕೆಲವೇ ನಿವಾಸಿಗಳು. ಬಲಿಷ್ಠವಾದ ಅರಸ ಅದಕ್ಕೆ ಮುತ್ತಿಗೆಹಾಕಿದ. ಅದರ ಸುತ್ತಲು ದೊಡ್ಡ ಕೋಟೆ ಎಬ್ಬಿಸಿದ.</verse>
				<verse number="15">ಆಗ ಅಲ್ಲಿದ್ದವರು ತಮ್ಮಲ್ಲೇ ಒಬ್ಬ. ಜ್ಞಾನಿಯನ್ನು ಕಂಡುಹಿಡಿದರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದ. ಆದರೆ ಆ ಬಡಜ್ಞಾನಿಯನ್ನು ಆಮೇಲೆ ಯಾರೂ ಸ್ಮರಿಸಲಿಲ್ಲ.</verse>
				<verse number="16">ಇದನ್ನು ನೋಡಿದ ನಾನು, ಶಕ್ತಿಗಿಂತ ಜ್ಞಾನವೇ ಶ್ರೇಷ್ಠ; ಆದರೆ ಜನರು ಆ ಬಡವನ ಜ್ಞಾನವನ್ನು ತಾತ್ಸಾರ ಮಾಡುತ್ತಾರೆ, ಅವನ ಮಾತುಗಳನ್ನು ಗಮನಿಸುವುದಿಲ್ಲ, ಎಂದುಕೊಂಡೆ.</verse>
				<verse number="17">ಹುಚ್ಚರ ಕೂಟದಲ್ಲಿ ಕೇಳಿಬರುವ ಅಧ್ಯಕ್ಷನ ಕೂಗಾಟಕ್ಕಿಂತ ಜ್ಞಾನಿಯ ಮೆಲ್ಲನೆಯ ಮಾತು ಕಿವಿಗೆ ಲೇಸು.</verse>
				<verse number="18">ಯುದ್ಧಾಯುಧಗಳಿಗಿಂತ ಜ್ಞಾನವೇ ಉತ್ತಮ; ಆದರೆ ಒಬ್ಬನೇ ಒಬ್ಬ ಪಾಪಿ ಸಾಕು ಪುಣ್ಯಕೋಟೆಯನ್ನು ಹಾಳುಮಾಡಲು!</verse>
			</chapter>
			<chapter number="10">
				<verse number="1">ಸತ್ತ ನೊಣಗಳಿಂದ ಗಂದಿಗನ ತೈಲ ಕೂಡ ನಾರುತ್ತದೆ. ಅಂತೆಯೇ ಹುಚ್ಚುತನ ಕೊಂಚವಾದರೂ ಜ್ಞಾನಮಾನಗಳನ್ನು ಕೆಡಿಸಿಬಿಡುತ್ತದೆ.</verse>
				<verse number="2">ಜ್ಞಾನಿಯ ಬುದ್ಧಿ ಬಲಗೈಯಾದರೆ ಅಜ್ಞಾನಿಯ ಬುದ್ಧಿ ಎಡಗೈ.</verse>
				<verse number="3">ಬುದ್ಧಿತಪ್ಪಿ ತಿರುಗಾಡುವ ಹುಚ್ಚನು ದಾರಿಯಲ್ಲೆಲ್ಲಾ ತನ್ನ ಹುಚ್ಚುತನವನ್ನು ಪ್ರಕಟಮಾಡುತ್ತಾನೆ.</verse>
				<verse number="4">ರಾಜನು ಸಿಟ್ಟುಗೊಂಡನೆಂದು ಉದ್ಯೋಗಕ್ಕೇ ರಾಜೀನಾಮೆ ಕೊಟ್ಟುಬಿಡಬೇಡ; ತಾಳ್ಮೆಯಿಂದ ಘನದೋಷಗಳನ್ನೂ ಅಳಿಸಬಹುದು.</verse>
				<verse number="5">ಲೋಕದಲ್ಲಿ ನಾನು ಮತ್ತೊಂದು ಅನ್ಯಾಯವನ್ನು ಕಂಡೆ. ಅದು ಅಧಿಪತಿಗಳ ತಪ್ಪಿನಿಂದಾದುದು.</verse>
				<verse number="6">ಅದು ಯಾವುದೆಂದರೆ, ಮೂಢರನ್ನು ಮಹಾಪದವಿಗೆ ಏರಿಸುತ್ತಾರೆ; ಘನವಂತರನ್ನು ಹೀನಸ್ಥಿತಿಯಲ್ಲಿ ಇರಿಸುತ್ತಾರೆ.</verse>
				<verse number="7">ಗುಲಾಮನು ಕುದುರೆಸವಾರಿ ಮಾಡುವುದನ್ನೂ ಯಜಮಾನನು ಮನೆಯಾಳಂತೆ ನೆಲದ ಮೇಲೆ ನಡೆಯುವುದನ್ನೂ ನೋಡಿದ್ದೇನೆ.</verse>
				<verse number="8">ತಾನು ತೋಡಿದ ಗುಂಡಿಯಲ್ಲಿ ತಾನೇ ಬೀಳುವನು; ಗೋಡೆ ಒಡೆಯುವವನನ್ನು ಹಾವು ಕಡಿಯುವುದು.</verse>
				<verse number="9">ಬಂಡೆ ಸೀಳುವವನು ಬಂಡೆಯಿಂದಲೇ ಗಾಯಗೊಳ್ಳುವನು; ಮರಕಡಿಯುವವನು ಅದರಿಂದಲೇ ಅಪಾಯಕ್ಕೆ ಗುರಿಯಾಗುವನು.</verse>
				<verse number="10">ಮೊಂಡುಕೊಡಲಿಯ ಬಾಯನ್ನು ಮೊನೆಮಾಡದಿದ್ದರೆ ಹೆಚ್ಚು ಬಲಪ್ರಯೋಗ ಮಾಡಬೇಕಾಗುವುದು. ಕಾರ್ಯಸಿಧ್ಧಿಗೆ ಜ್ಞಾನವೇ ಸಾಧನ.</verse>
				<verse number="11">ಹಾವಾಡಿಗ ಹಾವಾಡಿಸುವುದಕ್ಕೆ ಮುಂಚೆಯೇ ಹಾವಿನಿಂದ ಕಡಿಸಿಕೊಂಡರೆ ಏನು ಪ್ರಯೋಜನ?</verse>
				<verse number="12">ಜ್ಞಾನಿಯ ಮಾತು ಹಿತಕರ; ಅಜ್ಞಾನಿಯ ಮಾತು ಅವನಿಗೆ ವಿನಾಶಕರ. ಅದು ಬುದ್ಧಿಹೀನತೆಯಿಂದ ಆರಂಭವಾಗುತ್ತದೆ. ಮೋಸ, ಮರುಳುತನದಲ್ಲಿ ಮುಕ್ತಾಯಗೊಳ್ಳುತ್ತದೆ.</verse>
				<verse number="13"></verse>
				<verse number="14">ಅಜ್ಞಾನಿ ಮಾತಿನ ಮಲ್ಲ. ಭವಿಷ್ಯತ್ತನ್ನು ಮಾನವ ತಿಳಿಯನು; ತಾನು ಕಾಲವಾದ ಮೇಲೆ ಏನಾಗುವುದೆಂದು ಅವನು ಯಾರಿಂದ ತಿಳಿಯಬಲ್ಲನು?</verse>
				<verse number="15">ಪಟ್ಟಣಕ್ಕೆ ದಾರಿತಿಳಿಯದವನಿಗೆ ಮೂಢರು ತಿಳಿಸಲು ಪಡುವ ಪ್ರಯಾಸ ಕೇವಲ ಆಯಾಸ.</verse>
				<verse number="16">ಓ ನಾಡೇ, ನಿನ್ನ ಒಡೆಯ ಬಾಲಕನಾಗಿದ್ದು ನಿನ್ನ ನಾಯಕರೆಲ್ಲರು ಹೊತ್ತಾರೆಯೇ ಔತಣಕ್ಕೆ ಕುಳಿತುಕೊಳ್ಳುವಂಥವರಾಗಿದ್ದಾರೆ, ಅದು ನಿನ್ನ ದೌರ್ಭಾಗ್ಯವೇ ಸರಿ.</verse>
				<verse number="17">ನಾಡೇ, ನಿನ್ನ ಒಡೆಯ ಕುಲೀನನಾಗಿದ್ದು, ನಿನ್ನ ನಾಯಕರೆಲ್ಲ ಸಕಾಲದಲ್ಲಿ ಊಟಮಾಡಿ, ಕುಡುಕರಾಗುವುದರ ಬದಲು ಶಕ್ತಿಯುತರಾದರೆ, ಅದು ನಿನ್ನ ಸೌಭಾಗ್ಯವೇ ಸರಿ.</verse>
				<verse number="18">ಮೈಗಳ್ಳನ ಮನೆ ಅಂಕುಡೊಂಕಾಗಿರುತ್ತದೆ; ಸೋಮಾರಿಯ ಸೂರು ಸೋರುತ್ತಿರುತ್ತದೆ.</verse>
				<verse number="19">ವಿನೋದಕ್ಕಾಗಿ ಔತಣ, ಆನಂದಕ್ಕಾಗಿ ಮದ್ಯಪಾನ; ಎಲ್ಲವನ್ನು ಒದಗಿಸಿಕೊಡುವುದಕ್ಕಾಗಿ ಹಣ.</verse>
				<verse number="20">ಅರಸನನ್ನು ಮನಸ್ಸಿನಲ್ಲಿಯೂ ನಿಂದಿಸಬೇಡ; ಧನಿಕನನ್ನು ಮಲಗುವ ಕೋಣೆಯಲ್ಲೂ ದೂಷಿಸಬೇಡ; ಆಕಾಶದ ಹಕ್ಕಿ ಆ ಸುದ್ದಿಯನ್ನು ಮುಟ್ಟಿಸೀತು; ಹಾರುವ ಪಕ್ಷಿ ಆ ಸಮಾಚಾರವನ್ನು ತಿಳಿಸೀತು!</verse>
			</chapter>
			<chapter number="11">
				<verse number="1">ನಿನ್ನ ಆಹಾರ ಧಾನ್ಯವನ್ನು ಹೊರನಾಡಿನ ವ್ಯಾಪಾರಕ್ಕೆ ಹಾಕು. ಬಹುದಿನದ ಮೇಲೆ ಅದು ಬಡ್ಡಿ ಸಮೇತ ನಿನಗೆ ಸಿಕ್ಕುವುದು.</verse>
				<verse number="2">ನಿನ್ನ ಹಣವನ್ನು ವಿಭಾಗಿಸಿ ಏಳೆಂಟು ಸ್ಥಳಗಳಲ್ಲಿ ಇಡು. ಏಕೆಂದರೆ ಎಲ್ಲಿ, ಎಂಥ ಕೇಡು ಸಂಭವಿಸಬಹುದೆಂದು ನಿನಗೆ ತಿಳಿಯದು.</verse>
				<verse number="3">ಮಳೆ ತುಂಬಿದ ಮೋಡಗಳು ನೆಲದ ಮೇಲೆ ಸುರಿದುಬಿಡುತ್ತವೆ. ಮರವು ದಕ್ಷಿಣದ ಕಡೆಗಾಗಲಿ, ಉತ್ತರದ ಕಡೆಗಾಗಲಿ ಉರುಳಿದರೆ ಬಿದ್ದ ಕಡೆಯಲ್ಲೆ ಬಿದ್ದಿರುತ್ತದೆ.</verse>
				<verse number="4">ಗಾಳಿಗಾಗಿಯೇ ಕಾದಿರುವವನು, ಮೋಡಕ್ಕಾಗಿಯೇ ಎದುರು ನೋಡುತ್ತಿರುವವನು ಎಂದಿಗೂ ಬೀಜಬಿತ್ತಲಾರನು; ಎಂದಿಗೂ ಪೈರು ಕೊಯ್ಯಲಾರನು.</verse>
				<verse number="5">ಗಾಳಿಯ ಚಲನೆಯನ್ನಾಗಲಿ ಗರ್ಭಿಣಿಯ ಭ್ರೂಣದ ಬೆಳವಣಿಗೆಯನ್ನಾಗಲಿ ನಿನ್ನಿಂದ ತಿಳಿಯಲಾಗದು. ಅಂತೆಯೇ ಸರ್ವೇಶ್ವರನಾದ ದೇವರ ಕಾರ್ಯವನ್ನು ನಿನ್ನಿಂದ ಗ್ರಹಿಸಲಾಗದು.</verse>
				<verse number="6">ಮುಂಜಾನೆಯಲ್ಲೇ ಬೀಜಬಿತ್ತು; ಸಂಜೆಯಲ್ಲೂ ನಿನ್ನ ಕೈಗೆ ಬಿಡುವುಕೊಡಬೇಡ; ಇದು ಸಫಲವೋ ಅದು ಸಫಲವೋ ನಿನ್ನಿಂದ ಹೇಳಲಾಗದು. ಒಂದು ವೇಳೆ ಎರಡೂ ಒಳ್ಳೆಯ ಬೆಳೆಯನ್ನು ಕೊಡಬಹುದು.</verse>
				<verse number="7">ಬೆಳಕು ಬಹಳ ಇಂಪು; ಸೂರ್ಯನ ಕಾಂತಿ ಕಣ್ಣುಗಳಿಗೆ ಸೊಂಪು. ಮಾನವನು ಎಷ್ಟೇ ಧೀರ್ಘಕಾಲ ಬದುಕಿರಲಿ ತನ್ನ ಬಾಳಿನ ದಿನಗಳಲ್ಲೆಲ್ಲಾ ಆನಂದಿಸಲಿ; ಆದರೆ ಅಂಧಕಾರದ ದಿನಗಳು ಸಹ ಬಹಳ ಇವೆ ಎಂಬುದನ್ನು ನೆನಪಿಗೆ ತಂದುಕೊಳ್ಳಲಿ. ಆ ಬಳಿಕ ಬರುವುದೆಲ್ಲಾ ನಿರರ್ಥಕ.</verse>
				<verse number="8">ಯುವಕನೇ, ಯೌವನದಲ್ಲಿ ಆನಂದಿಸು. ಯೌವನ ದಿನಗಳಲ್ಲಿ ಹೃತ್ಪೂರ್ವಕವಾಗಿ ಸಂತೋಷಿಸು. ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೊ. ಆದರೆ ಈ ಎಲ್ಲ ವಿಷಯಗಳಲ್ಲಿ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವರೆಂಬುದನ್ನು ಮನದಲ್ಲಿಡು.</verse>
				<verse number="9"></verse>
				<verse number="10">ನಿನ್ನ ಹೃದಯದಿಂದ ವ್ಯಥೆಯನ್ನೂ ನಿನ್ನ ದೇಹದಿಂದ ಯಾತನೆಯನ್ನೂ ದೂರಮಾಡು. ಯೌವನವೂ ಪ್ರಾಯವೂ ಬೇಗ ಮಾಯವಾಗುವುವು.</verse>
			</chapter>
			<chapter number="12">
				<verse number="1">ಆದುದರಿಂದ ಯೌವನದಲ್ಲಿ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸಿಕೊ. ಕಷ್ಟಕರವಾದ ದಿನಗಳು ಬರುವುದಕ್ಕೆ ಮುನ್ನ, ಜೀವನ ಬೇಸರವಾಗಿದೆ ಎಂದು ನೀನು ಹೇಳುವುದಕ್ಕೆ ಮುಂಚೆ ಆತನನ್ನು ಸ್ಮರಿಸು.</verse>
				<verse number="2">ಆ ಕಷ್ಟಕರವಾದ ದಿನಗಳಲ್ಲಿ ಸೂರ್ಯಚಂದ್ರನಕ್ಷತ್ರಗಳೂ ನಿನಗೆ ಮೊಬ್ಬಾಗುವುವು. ಮಳೆಯಾದ ಮೇಲೂ ಮೋಡಗಳು ಮತ್ತೆ ಬರುವುವು;</verse>
				<verse number="3">ಬಲಿಷ್ಠವಾಗಿದ್ದ ನಿನ್ನ ಕಾಲುಗಳು ಬಗ್ಗುವುವು; ಹಲ್ಲುಗಳು ಉದುರಿ ಅಗಿಯುವ ಕೆಲಸ ನಿಲ್ಲುವುದು; ಕಿಟಕಿಗಳಂಥ ಕಣ್ಣುಗಳು ಮಂಕಾಗುವುವು.</verse>
				<verse number="4">ಕಿವಿಗಳು ಮಂದವಾಗಿ ಹಾದಿಬೀದಿಗಳ ಶಬ್ದವು ಕೇಳಿಸವು. ಬೀಸುವ ಶಬ್ದವು ತಗ್ಗಿ ಹಕ್ಕಿಯ ಶಬ್ದಗಳಷ್ಟು ಕಿರಿದಾಗುವುದು; ಬೀಸುವವರ ಹಾಡೆಲ್ಲಾ ಕುಗ್ಗಿಹೋಗುವುದು;</verse>
				<verse number="5">ದಾರಿಯಲ್ಲಿ ನಡೆವುದು ಅಪಾಯಕರವಾಗಿರುವುದು; ಹೂಬಿಟ್ಟ ಬಾದಾಮಿ ಮರದಂತೆ ತಲೆಗೂದಲು ನರೆತುಬಿಡುವುದು, ಮಿಡತೆಯು ಕೂಡ ಭಾರವಾಗುವುದು; ಆಸೆ ಕುಂದಿಹೋಗುವುದು. ನಿನ್ನ ನಿತ್ಯಗೃಹಕ್ಕೆ ತೆರಳಿರುವೆ, ಗೋಳಾಟದವರು ಬೀದಿಯಲ್ಲಿ ಕಾಣಿಸಿಕೊಳ್ಳುವರು.</verse>
				<verse number="6">ಬೆಳ್ಳಿಯ ಸರ ಕಿತ್ತುಹೋಗುವುದು, ಚಿನ್ನದಬಟ್ಟಲು ಜಜ್ಜಿಹೋಗುವುದು; ಮಡಕೆ ಬುಗ್ಗೆಯ ಹತ್ತಿರವೆ ಒಡೆಯುವುದು, ಬಾವಿಯ ರಾಟೆ ಮುರಿಯುವುದು.</verse>
				<verse number="7">ಮಣ್ಣಿನ ದೇಹ ತನ್ನ ಭೂಮಿಗೆ ಸೇರಿಹೋಗುವುದು; ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. (ಇಷ್ಟರೊಳಗೆ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸದಿರಬೇಡ).</verse>
				<verse number="8">“ವ್ಯರ್ಥವೇ ವ್ಯರ್ಥ! ಸಮಸ್ತವೂ ವ್ಯರ್ಥ!!” ಎನ್ನುತ್ತಾನೆ ಉಪದೇಶಕ.</verse>
				<verse number="9">ಉಪದೇಶಕನು ಜ್ಞಾನಿಯಾಗಿದ್ದ; ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದ. ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ, ಕ್ರಮಪಡಿಸಿದ.</verse>
				<verse number="10">ಹಿತಕರವಾದ ವಚನಗಳನ್ನು ಅವನು ಹುಡುಕಿ ಆರಿಸಿದ; ಅವನಿಂದ ರಚಿತವಾದವು ಸರಿಯಾದುವು, ಸತ್ಯವಾದುವು.</verse>
				<verse number="11">ಜ್ಞಾನಿಗಳ ನುಡಿಗಳು ಮೊನೆಗೋಲುಗಳು, ಅವರು ಸಂಗ್ರಹಿಸಿದ ವಚನಗಳು ಬಿಗಿಯಾಗಿ ಜಡಿದ ಮೊಳೆಗಳು. ಅವುಗಳ ಮೂಲಕರ್ತನು ಎಲ್ಲರ ಏಕೈಕ ಮೇಷಪಾಲ.</verse>
				<verse number="12">ಕುಮಾರಾ, ಇವುಗಳಲ್ಲದೆ ನೀನು ಎಚ್ಚರಿಕೆಯಿಂದಿರಬೇಕಾದುವು ಇನ್ನೂ ಇವೆ. ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿಯಾದ ವ್ಯಾಸಂಗದಿಂದ ದೇಹಕ್ಕೆ ಆಯಾಸ.</verse>
				<verse number="13">ವಿಷಯ ಮುಗಿಯಿತು; ಎಲ್ಲವನ್ನು ಕೇಳಿ ಆಯಿತು. ದೇವರಿಗೆ ಭಯಪಟ್ಟು ಅವರ ಆಜ್ಞೆಗಳನ್ನು ಕೈಗೊಳ್ಳು. ಇದೇ ಪ್ರತಿಯೊಬ್ಬ ಮಾನವನ ಕರ್ತವ್ಯ.</verse>
				<verse number="14">ದೇವರು ಎಲ್ಲ ಕಾರ್ಯಗಳನ್ನು, ರಹಸ್ಯವಾದುವುಗಳನ್ನು ಕೂಡ, ಅವು ಒಳ್ಳೆಯದಾಗಿರಲಿ, ಕೆಟ್ಟದಾಗಿರಲಿ, ನ್ಯಾಯವಿಚಾರಣೆಗೆ ಗುರಿಮಾಡುವರು.</verse>
			</chapter>
		</book>
		<book number="22">
			<chapter number="1">
				<verse number="1">ಸೊಲೊಮೋನನ ಪರಮಗೀತೆ: ನಲ್ಲೆ:</verse>
				<verse number="2">ಚುಂಬಿಸೆನ್ನನು ನಿನ್ನ ತುಟಿಗಳಿಂದ ನಿನ್ನ ಪ್ರೀತಿ ಅತಿ ಮಧುರ ಮಧುಪಾನಕ್ಕಿಂತ.</verse>
				<verse number="3">ನೀನು ಹಚ್ಚಿಕೊಂಡಿರುವ ತೈಲ ಎನಿತು ಸುವಾಸನೀಯ ಸುರಿದ ಪರಿಮಳದಂತೆ ವ್ಯಾಪ್ತ ನಿನ್ನ ನಾಮಾಂಕಿತ ಕನ್ಯೆಯರೆಲ್ಲರು ನಿನ್ನನು ಪ್ರೀತಿಸದಿರಲು ಅಸಾಧ್ಯ.</verse>
				<verse number="4">ನನ್ನನ್ನು ತುಸು ಎಳೆ, ಓಡೋಣ ನಾವು ಮುಂದಕ್ಕೆ; ಅರಸನಾಗಿರು ನನಗೆ ಕರೆದೊಯ್ಯಿ ನನ್ನನ್ನು ಅಂತಃಪುರಕ್ಕೆ. ಹರ್ಷಿಸೋಣ, ಒಂದಿಗೆ ಆನಂದಿಸೋಣ ಮಧುಪಾನಕ್ಕಿಂತ ನಿನ್ನ ಪ್ರೀತಿ ಸ್ತುತ್ಯಾರ್ಹ ನಿನ್ನನ್ನು ಪ್ರೀತಿಸುವುದು ಎನಿತು ಸಹಜ!</verse>
				<verse number="5">ಓ ಜೆರುಸಲೇಮಿನ ಮಹಿಳೆಯರೇ, ನಾನು ಕಪ್ಪಾಗಿರುವೆ ಕೇದಾರಿನ ಗುಡಾರಗಳಂತೆ ಆದರೂ ಚೆಲುವೆ ಸೊಲೊಮೋನನಾ ಪರದೆಗಳಂತೆ.</verse>
				<verse number="6">ದಿಟ್ಟಿಸಿ ನೋಡಬೇಡಿ ನನ್ನ ರೂಪವನ್ನೆ ನಾ ಕಪ್ಪಾಗಿರುವುದು ಸೂರ್ಯನ ತಾಪದಿಂದಲೆ. ಸಿಟ್ಟುಗೊಂಡರು ಸಹೋದರರು ನನ್ನ ಮೇಲೆ ಅಟ್ಟಿದರು ನನ್ನನು ತೋಟಕಾಯುವುದಕ್ಕೆ ಗಮನ ಕೊಡಲಾಗಲಿಲ್ಲ ನನ್ನ ತನು ತೋಟಕ್ಕೆ.</verse>
				<verse number="7">ನನ್ನ ಪ್ರಾಣಪ್ರಿಯನೇ ಹೇಳು: ನಿನ್ನ ಮಂದೆಯನ್ನು ನೀನು ಮೇಯಿಸುವುದೆಲ್ಲಿ? ನಡುಹಗಲಲ್ಲಿ ಅದು ವಿಶ್ರಮಿಸುವುದೆಲ್ಲಿ? ನಾನೇಕೆ ಅಲೆಯಬೇಕು ಮುಸುಕು ಹಾಕಿದವಳಂತೆ ನಿನ್ನ ಗೆಳೆಯರ ಮಂದೆಗಳ ಹಿಂದೆ? ನಲ್ಲ:</verse>
				<verse number="8">ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಿನಗಿದು ಗೊತ್ತಿಲ್ಲವಾದರೆ ಹೋಗು ಕುರಿಹಿಂಡಿನ ಜಾಡಿನಲ್ಲೆ ಮೇಯಿಸು ನಿನ್ನ ಮೇಕೆಮರಿಗಳನೆ ಕುರುಬರ ಗುಡಾರಗಳ ಸಮೀಪದಲ್ಲೆ.</verse>
				<verse number="9">ಫರೋಹನ ರಥವನ್ನೆಳೆವ ಹೆಣ್ಣುಕುದುರೆಗೆ ಹೋಲಿಸಿರುವೆ ನಾ ನಿನ್ನನು ಪ್ರಿಯಳೇ.</verse>
				<verse number="10">ಎಷ್ಟು ಅಂದವಾಗಿವೆ ನಿನ್ನ ಕೆನ್ನೆಗಳು ಕಿವಿಯೋಲೆಗಳಿಂದ! ನಿನ್ನ ಕೊರಳು ಕಂಠಹಾರಗಳಿಂದ!</verse>
				<verse number="11">ಮಾಡಿಸುವೆ ನಿನಗೆ ಬಂಗಾರದ ಅಂಚು, ಬೆಳ್ಳಿಯ ಕುಚ್ಚು. ನಲ್ಲೆ:</verse>
				<verse number="12">ಅತ್ತ ರಾಜನು ಮಂಚದ ಮೇಲೆ ಮಲಗಿಕೊಂಡಿರಲು ಇತ್ತ ಬೀರುತ್ತಿತ್ತು ನನ್ನ ಪರಿಮಳ ತೈಲ ಸುವಾಸನೆಯನು.</verse>
				<verse number="13">ನನ್ನ ಭಾಗ್ಯಕ್ಕೆ ನನ್ನ ನಲ್ಲ ಸ್ತನಗಳ ಮಧ್ಯೆಯಿರುವ ಪರಿಮಳ ಚೀಲ.</verse>
				<verse number="14">ನನ್ನ ಪಾಲಿಗೆ ನನ್ನ ಪ್ರಿಯನು ಏನ್ಗೆದಿಯ ತೋಟದ ಹೂಗೊಂಚಲು. ನಲ್ಲ:</verse>
				<verse number="15">ಆಹಾ, ನನ್ನ ಪ್ರಿಯಳೇ, ನೀನೆಷ್ಟು ಚೆಲುವೆ ಆಹಾ, ನೀನೆಷ್ಟು ಕೋಮಲೆ ನಿನ್ನ ನೇತ್ರಗಳು ಪಾರಿವಾಳಗಳಂತೆ! ನಲ್ಲೆ:</verse>
				<verse number="16">ಆಹಾ, ಎನ್ನಿನಿಯಾ, ನೀನೆಷ್ಟು ಸುಂದರ ನೀನೆಷ್ಟು ಮನೋಹರ!</verse>
				<verse number="17">ನಮ್ಮ ಹಾಸಿಗೆ ಪಚ್ಚೆಪಸರೇ, ನಮ್ಮ ಮೇಲ್ಛಾವಣಿ ತುರಾಯಿ ಮರಗಳೇ ಅದರ ತೊಲೆಗಳು ದೇವದಾರು ವೃಕ್ಷಗಳೇ.</verse>
			</chapter>
			<chapter number="2">
				<verse number="1">ನಾನು ಶಾರೋನಿನ ನೆಲಸಂಪಿಗೆ ತಗ್ಗಿನ ತಾವರೆ. ನಲ್ಲ:</verse>
				<verse number="2">ನನ್ನ ಪ್ರಿಯಳು ಸ್ತ್ರೀಯರಲ್ಲಿ ಶ್ರೇಷ್ಠಳು ಮುಳ್ಳುಪೊದರಿನ ನಡುವೆ ತಾವರೆಯಂತಿಹಳು. ನಲ್ಲೆ:</verse>
				<verse number="3">ನನ್ನ ಪ್ರಿಯನು ಪುರುಷೋತ್ತಮನು ವನವೃಕ್ಷಗಳ ಮಧ್ಯೆ ಸೇಬಿನಂತಿಹನು. ಕುಳಿತು ಸಂತೋಷಗೊಂಡೆ ನಾನದರ ನೆರಳಿನೊಳು ಸಿಹಿ ನನ್ನ ನಾಲಿಗೆಗೆ ಅದರ ಫಲವು.</verse>
				<verse number="4">ಬರಮಾಡಿಕೊಂಡನು ನನ್ನನು ಔತಣದ ಮನೆಗೆ ನನ್ನ ಮೇಲೆತ್ತಿದನು ‘ಪ್ರೀತಿ’ ಎಂಬ ತನ್ನ ಪತಾಕೆ.</verse>
				<verse number="5">ಅಸ್ವಸ್ಥಳಾಗಿರುವೆನು ಅನುರಾಗದಿಂದ ಉಪಚರಿಸಿ ನನ್ನನು ಸೇಬುಹಣ್ಣುಗಳಿಂದ ಚೇತನಗೊಳಿಸಿರಿ ದೀಪದ್ರಾಕ್ಷೆಯಿಂದ.</verse>
				<verse number="6">ಆತನ ಎಡಗೈ ನನಗೆ ತಲೆದಿಂಬಾಗಿದ್ದರೆ ಆತನ ಬಲಗೈ ನನ್ನನ್ನು ಆಲಂಗಿಸಿದರೆ ಎಷ್ಟು ಚೆನ್ನಾಗಿರುತ್ತಿತ್ತು!</verse>
				<verse number="7">ಜೆರುಸಲೇಮಿನ ಮಹಿಳೆಯರೇ, “ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಆತನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಿಮಗೆ ವಿಧಿಸಿರುವೆ ಆಣೆಯಿಟ್ಟು ವನದ ಹುಲ್ಲೆ ಹರಿಣಿಗಳ ಮೇಲೆ. ನಲ್ಲೆ:</verse>
				<verse number="8">ಅಗೋ, ನನ್ನ ಕಾಂತನ ಸಪ್ಪಳ! ಹಾರಿ ಬರುತಿಹನು ಬೆಟ್ಟಗಳ ಮೇಲೆ ಜಿಗಿದು ಬರುತಿಹನು ಗುಡ್ಡಗಳ ಮೇಲೆ.</verse>
				<verse number="9">ನನ್ನ ಪ್ರಿಯನು ಇಹನು ಜಿಂಕೆಯಂತೆ, ಎಳೆಯ ಹುಲ್ಲೆಯಂತೆ ಇಗೋ, ನಿಂತಿಹನು ಗೋಡೆಯ ಹಿಂಭಾಗದಲೆ, ದೃಷ್ಟಿಸಿ ನೋಡುತಿಹನು ಕಿಟಕಿಗಳಲಿ ಇಣುಕು ಹಾಕುತಿಹನು ಜಾಲಾಂತರಗಳಲಿ.</verse>
				<verse number="10">ನನ್ನ ನಲ್ಲನು ನನ್ನೊಡನೆ ಮಾತಾಡಿ ಹೀಗೆಂದನು: ನಲ್ಲ: ‘ಎದ್ದು ಬಾ, ಪ್ರಿಯತಮೆ, ಬಾ ನನ್ನೊಂದಿಗೆ, ಸುಂದರಿಯೇ.</verse>
				<verse number="11">ಇಗೋ, ಚಳಿಗಾಲ ಕಳೆಯಿತು ಮಳೆಗಾಲ ಮುಗಿಯಿತು.</verse>
				<verse number="12">ಧರೆಯಲ್ಲೆಲ್ಲ ಹೂಗಳು ಅರಳಿವೆ ನಲಿದು ಹಾಡುವ ಕಾಲ ಬಂದಿದೆ ಬೆಳವಕ್ಕಿಯ ಕೂಗು ನಾಡಿನಲ್ಲಿ ಕೇಳಿಸುತ್ತಿದೆ.</verse>
				<verse number="13">ಅಂಜೂರದ ಕಾಯಿಗಳು ಹಣ್ಣಾಗಿವೆ ದ್ರಾಕ್ಷಾಬಳ್ಳಿಗಳು ಹೂಬಿಟ್ಟಿವೆ. ಅದರ ಪರಿಮಳ ಹರಡುತ್ತಿದೆ.’ ನಲ್ಲ: ಎದ್ದು ಬಾ, ನನ್ನ ಪ್ರೇಯಸಿಯೇ ಬಾ ನನ್ನೊಂದಿಗೆ, ಸುಂದರಿಯೇ.</verse>
				<verse number="14">ಬಂಡೆಯ ಬಿರುಕುಗಳಲ್ಲಿ ಸಂದುಗಳ ಮರೆಯಲ್ಲಿ ತಂಗಿರುವ ಪಾರಿವಾಳವೇ ಬಾ. ನಿನ್ನ ರೂಪವನು ನನಗೆ ಕಾಣಿಸು ನಿನ್ನ ದನಿಯನು ನನಗೆ ಕೇಳಿಸು. ನಿನ್ನ ದನಿ ಎನಿತೋ ಇಂಪು! ನಿನ್ನ ರೂಪ ಎನಿತೋ ತಂಪು!</verse>
				<verse number="15">ತೋಟಗಳನು ಹಾಳುಮಾಡುವಾ ನರಿಗಳನ್ನೂ ಮರಿಗಳನ್ನೂ ಹಿಡಿದು ತನ್ನಿ ಹೂಗಳು ಅರಳಿವೆ ನಮ್ಮ ತೋಟಗಳಲಿ. ನಲ್ಲೆ:</verse>
				<verse number="16">ನನ್ನ ಇನಿಯನು ನನ್ನವನೇ, ನಾನು ಅವನವಳೇ ಮೇಯುತಿದೆ ಅವನ ಮಂದೆ ನೆಲದಾವರೆಗಳ ನಡುವೆ.</verse>
				<verse number="17">ಕತ್ತಲು ಕಳೆಯುವ ಮುನ್ನ ಹೊತ್ತು ಮೂಡುವ ಮುನ್ನ ಹೊರಟು ಬಾ, ನನ್ನ ಕಾಂತ ಜಿಂಕೆಯಂತಿರು ಪ್ರಾಯದ ಹುಲ್ಲೆಯಂತಿರು ಬೇತೆರ್ ಪರ್ವತದ ಮೇಲಿರು.</verse>
			</chapter>
			<chapter number="3">
				<verse number="1">ನಲ್ಲೆ: ನನ್ನ ಪ್ರಾಣಕಾಂತನನ್ನು ರಾತ್ರಿಯೆಲ್ಲಾ ಹುಡುಕಿದೆ ಹಾಸಿಗೆಯ ಮೇಲೆ ಹಾತೊರೆದೆ ಹುಡುಕಿ ಹುಡುಕಿ ಸಿಗಲಾರದೆ ಬೇಸತ್ತೆ.</verse>
				<verse number="2">ಎದ್ದು ಊರೆಲ್ಲಾ ಅಲೆದಾಡಿದೆ ಬೀದಿಗಳಲ್ಲಿ, ಚೌಕಗಳಲ್ಲಿ ಹುಡುಕಾಡಿದೆ. ಹುಡುಕಿ ಹುಡುಕಿ ಸಿಗಲಾರದೆ ಬೇಸತ್ತೆ.</verse>
				<verse number="3">ಊರಲ್ಲಿ ತಿರುಗುವ ಪಹರೆಯವರ ಕೈಗೆ ಸಿಕ್ಕಿಬಿದ್ದೆ “ನನ್ನ ಪ್ರಾಣಕಾಂತನನ್ನು ಕಂಡಿರಾ?’ ಎಂದು ವಿಚಾರಿಸಿದೆ.</verse>
				<verse number="4">ಅವರನ್ನು ಬಿಟ್ಟ ತುಸು ಹೊತ್ತಿನಲ್ಲೆ ನನ್ನ ಪ್ರಾಣಕಾಂತನನ್ನು ಕಂಡುಕೊಂಡೆ. ತಾಯ ಮನೆಗೆ, ನನ್ನ ಹೆತ್ತವಳ ಮನೆಗೆ ಕರೆದೊಯ್ದೆ ಕೈಯ ಬಿಡದೆಯೆ ಕರೆದುಕೊಂಡು ಹೋದೆ.</verse>
				<verse number="5">ಜೆರುಸಲೇಮಿನ ಮಹಿಳೆಯರೇ, “ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಆತನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಿಮಗೆ ವಿಧಿಸಿರುವೆನು ವನದ ಹುಲ್ಲೆ ಹರಿಣಿಗಳ ಮೇಲೆ ಆಣೆಯಿಟ್ಟು.</verse>
				<verse number="6">ವರ್ತಕರು ಮಾರುವ ಸಕಲ ಸುಗಂಧ ತೈಲಗಳಿಂದ ರಸಗಂಧ ಸಾಂಬ್ರಾಣಿ ಮುಂತಾದ ದ್ರವ್ಯಗಳಿಂದ ಧೂಮಸ್ತಂಭಗಳೋಪಾದಿ ಹೊರಹೊಮ್ಮುತ್ತಿರುವ ಅರಣ್ಯದ ಮಾರ್ಗವಾಗಿ ಬರುತ್ತಿರುವ ಆ ಮೆರವಣಿಗೆ ಯಾರದು?</verse>
				<verse number="7">ಇದೋ, ನೋಡು ಸೊಲೊಮೋನನ ಪಲ್ಲಕ್ಕಿ ಅದರ ಸುತ್ತ ಇಸ್ರಯೇಲಿನ ಶೂರರು ಅರವತ್ತು ಮಂದಿ ಯುದ್ಧಪ್ರವೀಣರಾದ ಅವರಾಗಿಹರು ಶಸ್ತ್ರಧಾರಿ ಕತ್ತಿಯ ಕಟ್ಟಿಹರು ಪ್ರತಿಯೊಬ್ಬರು ಸೊಂಟಕ್ಕೆ ಕತ್ತಲ ದುರಂತಗಳನ್ನು ಎದುರಿಸಲಿಕ್ಕೆ.</verse>
				<verse number="8"></verse>
				<verse number="9">ಅರಸ ಸೊಲೊಮೋನನು ಮಾಡಿಸಿಕೊಂಡನು ಲೆಬನೋನಿನ ಮರದಿಂದ ಆ ಪಲ್ಲಕ್ಕಿಯನು.</verse>
				<verse number="10">ಸ್ತಂಭಗಳನ್ನು ಬೆಳ್ಳಿಯಿಂದ ಒರಗನ್ನು ಬಂಗಾರದಿಂದ ಅದರ ಮೆತ್ತೆಯನ್ನು ಸಕಲಾತಿಯಿಂದ ಅಲಂಕರಿಸಿಹರು ಜೆರುಸಲೇಮಿನ ಮಹಿಳೆಯರು ಪ್ರೀತಿಯಿಂದ.</verse>
				<verse number="11">ಸಿಯೋನಿನ ಮಹಿಳೆಯರೇ, ಹೊರಟುಬನ್ನಿ ಅರಸ ಸೊಲೊಮೋನನನ್ನು ನೋಡಬನ್ನಿ ಆತನ ವಿವಾಹಮಹೋತ್ಸವ ದಿನದಂದು ಆತನ ತಾಯಿ ತೊಡಿಸಿದ ಮುಕುಟವನ್ನು ಆತ ಧರಿಸಿರುವುದನ್ನು ನೋಡಬನ್ನಿ.</verse>
			</chapter>
			<chapter number="4">
				<verse number="1">ನಲ್ಲ: ಆಹಾ! ನನ್ನ ಪ್ರಿಯಳೇ, ನೀನೆಷ್ಟು ರೂಪವತಿ! ಆಹಾ! ಎಷ್ಟು ಸುಂದರಿ! ಮುಸುಕಿನೊಳಗಿನ ಕಣ್ಣುಗಳು ಪಾರಿವಾಳಗಳು ನಿನ್ನ ತಲೆಗೂದಲಿನ ನರ್ತನವು ಗಿಲ್ಯಾದ್ ಗುಡ್ಡದಿಂದ ಇಳಿದುಬರುವ ಆಡುಮಂದೆಗೆ ಸಮಾನವು.</verse>
				<verse number="2">ನಿನ್ನ ಹಲ್ಲುಗಳ ಹೊಳಪು ಉಣ್ಣೆಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಯ ಬಿಳುಪು. ಮೇಲೇರುತ್ತಿವೆ ಅವು ಜೋಡಿ ಜೋಡಿಯಾಗಿ ಒಂಟಿಯಾದುದೊಂದು ಇಲ್ಲ ಅವುಗಳಲಿ.</verse>
				<verse number="3">ನಿನ್ನ ತುಟಿ ನಯವಾದ ಕೆಂಪುಪಟ್ಟಿ ಬಿಚ್ಚಿದಾಗ ನೀನೆಷ್ಟು ಸುರೂಪಿಣಿ! ಮಸುಕಿನಲ್ಲಿನ ನಿನ್ನ ಕೆನ್ನೆ, ಹೋಳಾಗಿಸಿದ ದಾಳಿಂಬೆ!</verse>
				<verse number="4">ನಿನ್ನ ಕೊರಳು ದಾವೀದನ ನುಣುಪಾದ ಗೋಪುರ ನಿನ್ನ ಕತ್ತಿನ ಹಾರ ಸಾವಿರ ಶೂರರ ಗುರಾಣಿಗಳ ಸರ.</verse>
				<verse number="5">ಹುಲ್ಲೆಯ ಅವಳಿಮರಿಗಳು ನಿನ್ನ ಸ್ತನಗಳೆರಡು ನೆಲದಾವರೆಯ ನಡುವೆ ಮೇಯುತ್ತಿರುವವು!</verse>
				<verse number="6">ಕತ್ತಲು ಕಳೆಯುವ ಮುನ್ನ ಹೊತ್ತು ಮೂಡುವ ಮುನ್ನ ಪರಿಮಳದ ಬೆಟ್ಟಕೆ ತೆರಳುವೆ ಧೂಪದ ಗುಡ್ಡದೊಳು ಅಡ್ಡಾಡುವೆ.</verse>
				<verse number="7">ನನ್ನ ಪ್ರಿಯಳೇ, ಸರ್ವಾಂಗಸುಂದರಿಯೇ, ನಿನ್ನೊಳು ಯಾವ ಕಳಂಕವು ಇಲ್ಲದಿರುವೆ.</verse>
				<verse number="8">ಬಾ, ವಧುವೆ, ಲೆಬನೋನಿನಿಂದ ಬಾ, ನನ್ನೊಡನೆ ಲೆಬನೋನಿನಿಂದ ಇಳಿದು ಬಾ ಅಮಾನದ ತುದಿಯಿಂದ ಶೆನೀರ್ ಮತ್ತು ಹೆರ್ಮೋನ್ ಶಿಖರಗಳಿಂದ. ಹೊರಟು ಬಾ ಸಿಂಹಗಳ ಗುಹೆಗಳಿಂದ ಚಿರತೆಗಳ ಗುಡ್ಡಗಳಿಂದ.</verse>
				<verse number="9">ನನ್ನ ಪ್ರಿಯಳೇ, ನನ್ನ ವಧುವೇ, ನನ್ನ ಹೃದಯವನ್ನು ನೀನು ಅಪಹರಿಸಿರುವೆ ಒಂದೇ ಕಿರುನೋಟದಿಂದ, ನನ್ನ ಹೃದಯವನ್ನು ವಶಪಡಿಸಿಕೊಂಡಿರುವೆ ನಿನ್ನ ಕಂಠಹಾರದ ಒಂದೇ ರತ್ನದಿಂದ.</verse>
				<verse number="10">ನನ್ನ ಪ್ರಿಯಳೇ, ನನ್ನ ವಧುವೇ, ನಿನ್ನ ಪ್ರೀತಿ ಎಷ್ಟೋ ರಮ್ಯ! ನಿನ್ನ ಪ್ರೇಮ ಮಧುಪಾನಕ್ಕಿಂತ ಎಷ್ಟೋ ಮಧುರ! ನಿನ್ನ ತೈಲದ ಪರಿಮಳ ಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!</verse>
				<verse number="11">ನನ್ನ ವಧುವೇ, ಜೇನು ಸುರಿಯುತ್ತಿದೆ ನಿನ್ನ ತುಟಿಗಳಿಂದ ಹಾಲುಜೇನು ಬರುತ್ತಿದೆ ನಿನ್ನ ನಾಲಗೆಯಡಿಯಿಂದ ಲೆಬನೋನಿನ ಸುಗಂಧ ಸೂಸುತ್ತಿದೆ ನಿನ್ನ ಉಡುಪಿನಿಂದ.</verse>
				<verse number="12">ನನ್ನ ಪ್ರಿಯಳು, ನನ್ನ ಮದಲಗಿತ್ತಿ ಸುಭದ್ರವಾದ ಉದ್ಯಾನವನ ಬೇಲಿಯೊಳಗಿನ ಬುಗ್ಗೆ ಮುಚ್ಚಿ ಮುದ್ರಿಸಿದ ಚಿಲುಮೆ.</verse>
				<verse number="13">ನಿನ್ನ ಉದ್ಯಾನದಲ್ಲಿ ಬೆಳೆದಿವೆ ದಾಳಿಂಬೆಯಂಥ ಉತ್ತಮ ಫಲವೃಕ್ಷಗಳು ಜಟಮಾಂಸಿ, ಕರ್ಪೂರ, ಜಟಮಾಂಸಿ, ಕುಂಕುಮ ಕೇಸರಿಗಳು.</verse>
				<verse number="14">ಬೆಳೆದಿವೆ ಪಟ್ಟೆಲವಂಗ ವಿವಿಧ ಸಾಂಬ್ರಾಣಿ ಗಿಡಗಳು ರಸಗಂಧ, ಅಗರುಗಳು ಸಕಲವಿಧ ಶ್ರೇಷ್ಠ ಸುಗಂಧ ಗಿಡಮೂಲಿಕೆಗಳು.</verse>
				<verse number="15">ನಿನ್ನ ತೋಟಗಳಿಗೆ ಬೇಕಾದ ಬುಗ್ಗೆ, ಉಕ್ಕಿಬರುವ ಒರತೆ, ಲೆಬನೋನಿನಿಂದ ಹರಿಯುವ ಕಾಲುವೆ ನಿನ್ನಲ್ಲಿವೆ ನಲ್ಲೆ:</verse>
				<verse number="16">ಉತ್ತರದ ಗಾಳಿಯೇ ಏಳು ದಕ್ಷಿಣದ ಗಾಳಿಯೇ ಬೀಸು ನನ್ನ ತೋಟದ ಮೇಲೆ ಬಿರುಸಾಗಿ ಬೀಸು ಸುವಾಸನೆಯನ್ನು ದೂರದೂರ ಪಸರಿಸು. ಬರಲಿ ಎನ್ನಿನಿಯನು ನನ್ನ ತೋಟಕೆ ಅತ್ಯುತ್ತಮ ಫಲಗಳನು ತಾನೇ ಭುಜಿಸಲಿಕೆ.</verse>
			</chapter>
			<chapter number="5">
				<verse number="1">ನಲ್ಲ: ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ:</verse>
				<verse number="2">ನಾ ನಿದ್ರಿಸುತ್ತಿದ್ದರೂ, ಎಚ್ಚರಗೊಂಡಿತ್ತು ನನ್ನ ಹೃದಯ ಇದೋ, ಬಾಗಿಲು ತಟ್ಟುತಿಹನು ನನ್ನ ಇನಿಯ! ನಲ್ಲ: ನನ್ನ ಪ್ರಿಯಳೇ, ನನ್ನ ಕಾಂತಳೇ, ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ ನನಗೆ, ನನ್ನ ತಲೆಯೆಲ್ಲಾ ನೆನೆದಿದೆ ಇಬ್ಬನಿಯಿಂದ ನನ್ನ ಕೂದಲು ತೊಯ್ದಿದೆ ರಾತ್ರಿಯ ಮಂಜಿನಿಂದ. ನಲ್ಲೆ:</verse>
				<verse number="3">ತೆಗೆದುಹಾಕಿರುವೆನಲ್ಲಾ ನನ್ನ ಅಂಗಿಯನ್ನು ಮತ್ತೆ ಅದನು ಹಾಕಿಕೊಳ್ಳುವುದೆಂತು? ತೊಳೆದಿರುವೆನಲ್ಲಾ ನನ್ನ ಪಾದಗಳನು ಮತ್ತೆ ಅವುಗಳನ್ನು ಕೊಳೆಮಾಡಿಕೊಳ್ಳುವುದೆಂತು?</verse>
				<verse number="4">ನನ್ನ ಕಾಂತನು ಕೈಯೊಡ್ಡಿಹನು ಬಾಗಿಲ ಸಂದಿನಲಿ ನನ್ನ ಮನ ಮಿಡಿಯಿತು ನನ್ನಂತರಂಗದಲಿ.</verse>
				<verse number="5">ಎದ್ದೆ ನಾನು ನಲ್ಲನಿಗೆ ಬಾಗಿಲ ತೆರೆಯಲೆಂದು ಅಗುಳಿಯ ಮೇಲೆ ತೊಟ್ಟಿಕ್ಕಿತು ಪರಿಮಳ ನನ್ನ ಕೈಗಳಿಂದ ಆ ರಸಗಂಧ ದ್ರವ್ಯ ನನ್ನ ಬೆರಳುಗಳಿಂದ.</verse>
				<verse number="6">ಬಾಗಿಲ ತೆರೆದು ನೋಡಿದೆ ನನ್ನಿನಿಯನಿಗಾಗಿ ಅಷ್ಟರೊಳಗೆ ಹೋಗಿಬಿಟ್ಟಿದ್ದನವನು ಹಿಂದಿರುಗಿ. ನಿಂತಂತಾಯಿತು ಅವನ ದನಿಗೆ ನನ್ನೆದೆಯ ತುಡಿತ ಎಷ್ಟೋ ಹುಡುಕಿದೆ, ಆದರೆ ಸಿಗಲಿಲ್ಲ ಎಷ್ಟೋ ಕೂಗಿದೆ, ಆದರೆ ಉತ್ತರವೇ ಇಲ್ಲ.</verse>
				<verse number="7">ಸುತ್ತುತ್ತಿದ್ದರು ಬೀದಿಗಳಲಿ ಪಹರೆಯವರು ನನ್ನನ್ನು ಕಂಡುಹಿಡಿದರು, ಹೊಡೆದು ಗಾಯಗೊಳಿಸಿದರು. ಕಿತ್ತುಕೊಂಡರು ಮೇಲುಹೊದಿಕೆಯನು ಆ ಪೌಳಿಗೋಡೆಯ ಕಾವಲುಗಾರರು.</verse>
				<verse number="8">ಜೆರುಸಲೇಮಿನ ಮಹಿಳೆಯರೇ, ಆಣೆಯಿಟ್ಟು ಹೇಳುತ್ತೇನೆ ನಿಮಗೆ: “ನೀವು ನನ್ನ ಕಾಂತನನ್ನು ಕಂಡರೆ ಅನುರಾಗದಿಂದ ನಾನು ಅಸ್ವಸ್ಥಳಾಗಿರುವೆ ಎಂದು ತಿಳಿಸಿರಿ ಅವನಿಗೆ” ಮಹಿಳೆಯರು:</verse>
				<verse number="9">“ಬೇರೆಯವರ ಕಾಂತರಿಗಿಂತ ನಿನ್ನ ಕಾಂತನಲ್ಲಿ ಏನು ವಿಶೇಷ? ಬೇರೆಯವರ ಇನಿಯರಿಗಿಂತ ನಿನ್ನ ಕಾಂತನಲ್ಲಿ ಅದೇನು ಅತಿಶಯ? ಸ್ತ್ರೀರತ್ನವೇ, ಹೇಳು ನಮಗೆಂತು ಈ ಪ್ರಮಾಣ?” ನಲ್ಲೆ:</verse>
				<verse number="10">ನನ್ನ ನಲ್ಲ, ತೇಜೋಮಯ, ರಕ್ತವರ್ಣ ಹತ್ತುಸಾವಿರ ಜನರಲ್ಲಿ ಶ್ರೇಷ್ಠ.</verse>
				<verse number="11">ಅವನ ಶಿರ ಅಪ್ಪಟ ಬಂಗಾರವು ಅವನ ಕೂದಲು ಕಾಗೆಕಪ್ಪು</verse>
				<verse number="12">ಅವನ ಕಣ್ಣುಗಳು ತುಂಬುತೊರೆಗಳ ಬಳಿ ತಂಗುವ ಹಾಲಿನ ಕೊಳದಲಿ ಮೈತೊಳೆವ ಪಾರಿವಾಳಗಳು.</verse>
				<verse number="13">ಅವನ ಕೆನ್ನೆಗಳು ಕರ್ಣಕುಂಡಲದ ಪಾತಿಗಳು ಸುಗಂಧ ಸಸ್ಯಗಳು ಬೆಳೆಯುವ ದಿಬ್ಬಗಳು ಅವನ ತುಟಿಗಳು ಅಚ್ಚ ಪರಿಮಳ ಸೂಸುವ ಕೆಂದಾವರೆಗಳು.</verse>
				<verse number="14">ಅವನ ಕೈಗಳು ಪೀತರತ್ನಖಚಿತ ಚಿನ್ನದ ಸಲಾಕೆಗಳು ಅವನ ದೇಹ ಇಂದ್ರನೀಲಮಯವಾದ ದಂತಫಲಕವು.</verse>
				<verse number="15">ಅವನ ಕಾಲುಗಳು ಅಪರಂಜಿಯ ಸುಣ್ಣಪಾದಗಳ ಮೇಲೆ ನಿಂತಿರುವ ಚಂದ್ರಕಾಂತ ಸ್ತಂಭಗಳು. ಅವನ ಗಾಂಭೀರ್ಯ ಲೆಬನೋನಿಗೆ ಸಮಾನ ದೇವದಾರು ಮರಗಳಂತೆ ರಮಣೀಯ.</verse>
				<verse number="16">ಅವನ ಮಾತು ಮಧುರ ಅವನು ಸರ್ವಾಂಗ ಸುಂದರ. ಜೆರುಸಲೇಮಿನ ಮಹಿಳೆಯರೇ, ಇವನೇ ನನ್ನ ಪ್ರಿಯನು ಇವನೇ ನನ್ನ ಇನಿಯನು.</verse>
			</chapter>
			<chapter number="6">
				<verse number="1">	 ಮಹಿಳೆಯರು: ಮಹಿಳಾಮಣಿಯೇ, ನಿನ್ನಿನಿಯನು ಹೋದುದೆಲ್ಲಿಗೆ? ಅವನನ್ನು ಹುಡುಕೋಣವೇ ನಾವು ನಿನ್ನೊಂದಿಗೆ? ಹೇಳು, ನಿನ್ನಿನಿಯನು ಹೋದುದೆಲ್ಲಿಗೆ? ನಲ್ಲೆ:</verse>
				<verse number="2">ನನ್ನ ಕಾಂತನು ತೆರಳಿಹನು ಸುಗಂಧ ಸಸ್ಯಗಳಿರುವ ತೋಟಕೆ ಉದ್ಯಾನಗಳಲ್ಲಿ ಮಂದೆಯನು ಮೇಯಿಸುವುದಕೆ ಅಲ್ಲಿನ ನೆಲದಾವರೆಗಳನ್ನು ಕೊಯ್ದು ತರುವುದಕೆ.</verse>
				<verse number="3">ಎನ್ನಿನಿಯನು ನನ್ನವನೇ, ನಾನು ಅವನವಳೇ ತನ್ನ ಮಂದೆಯ ಮೇಯಿಸುತ್ತಿಹನು ನೆಲದಾವರೆಗಳ ನಡುವೆ. ನಲ್ಲ:</verse>
				<verse number="4">ನನ್ನ ಪ್ರಿಯಳೇ, ನೀನು ಸುಂದರಿ, ತಿರ್ಚನಗರದಂತೆ ಮನೋಹರಿ, ಜೆರುಸಲೇಮಿನಂತೆ ಭಯಂಕರಿ, ಪತಾಕಿನಿಯಂತೆ.</verse>
				<verse number="5">ತಿರುಗಿಸು ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ನನ್ನ ಸೆರೆಹಿಡಿದು ಬಿಡುವವು ತಮ್ಮ ನೋಟದಿಂದ. ನಿನ್ನ ಕೇಶರಾಶಿಯ ನರ್ತನ ಗಿಲ್ಯಾದ್ ಗುಡ್ಡದಿಂದ ಇಳಿಯುವ ಆಡುಮಂದೆಗೆ ಸಮಾನ.</verse>
				<verse number="6">ನಿನ್ನ ಹಲ್ಲುಗಳ ಹೊಳಪು ತೊಳೆದ ಕುರಿಮಂದೆಯ ಬಿಳುಪು ಮೇಲೇರುತ್ತವೆ ಅವು ಜೋಡಿಜೋಡಿಯಾಗಿ ಒಂಟಿಯಾದುದೊಂದು ಇಲ್ಲ ಅವುಗಳಲಿ.</verse>
				<verse number="7">ಮುಸುಕಿನಲಿ ನಿನ್ನ ಕೆನ್ನೆ ಮಾಗಿ ಒಡೆದಿರುವ ದಾಳಿಂಬೆ.</verse>
				<verse number="8">ಅರಸನಿಗೆ ರಾಣಿಯರು ಅರವತ್ತು ಮಂದಿ ಉಪಪತ್ನಿಯರು ಎಂಬತ್ತು ಮಂದಿ ಯುವತಿಯರು ಲೆಕ್ಕವಿಲ್ಲದಷ್ಟು ಮಂದಿ.</verse>
				<verse number="9">ನನ್ನ ಪಾರಿವಾಳ, ನನ್ನ ನಿರ್ಮಲೆ ಇವಳೇ ಏಕಮಾತ್ರ ಪುತ್ರಿ ತಾಯಿಗೆ ಮುದ್ದುಮಗಳು ಹೆತ್ತವಳಿಗೆ. ಈಕೆ ಧನ್ಯಳೆಂದು ಹೊಗಳಿದರು ಯುವತಿಯರು ನೋಡಿ ರಾಣಿಯರು, ಉಪಪತ್ನಿಯರು ಕೊಂಡಾಡಿದರು ಈ ಪರಿ:</verse>
				<verse number="10">“ಉದಯಿಸುತ್ತಿರುವಳಿವಳು ಅರುಣೋದಯದಂತೆ ಸುಂದರಿಯಾಗಿಹಳು ಚಂದ್ರನಂತೆ ಶುಭ್ರಳಾಗಿಹಳು ಸೂರ್ಯನಂತೆ ಭಯಂಕರಳು ಪತಾಕಿನಿಯಂತೆ ಎಂಥವಳಿರಬಹುದು ಇವಳು ಪೇಳೈ?</verse>
				<verse number="11">ದ್ರಾಕ್ಷಾಬಳ್ಳಿ ಚಿಗುರಿದೆಯೋ ದಾಳಿಂಬೆಗಿಡ ಹೂಬಿಟ್ಟಿದೆಯೋ ಎಂದು ನೋಡಲಿಕೆ ಕಣಿವೆಯಲ್ಲಿರುವ ಕುಸುಮಗಳನು ಕಾಣಲಿಕೆ ನಾ ನಡೆದೆ ಬಾದಾಮಿಯ ತೋಟಕೆ.</verse>
				<verse number="12">ಇದ್ದಕ್ಕಿದ್ದ ಹಾಗೆಯೇ ನಾಯಕನಾಗಿ ನನ್ನ ನಾಡಿಗೆ ನಾ ಕುಳಿತಿದ್ದೆ ರಥದ ಮೇಲೆ.</verse>
				<verse number="13">ಶೂಲಮ್ ಊರಿನ ನಾರಿಯೇ ತಿರುಗು ಇತ್ತ, ತಿರುಗು ಅತ್ತ ನಾವು ನಿನ್ನನ್ನು ನೋಡುವಂತೆ ತಿರುಗು ಇತ್ತ, ತಿರುಗು ಅತ್ತ! ನಲ್ಲೆ: ಎರಡು ಸಾಲಿನ ನರ್ತಕಿಯರ ನಡುವೆ ಕುಣಿಯುವವಳನ್ನು ನೋಡುವಂತೆ ಶೂಲಮ್ ಊರಿನವಳಾದ ನನ್ನನು ನೀನು ನೋಡುವುದೇಕೆ?</verse>
			</chapter>
			<chapter number="7">
				<verse number="1">	 ನಲ್ಲ: ಅರಸಕುವರಿಯೇ, ಕೆರಗಳನ್ನು ಮೆಟ್ಟಿ ನಿಂತಿರುವ ನಿನ್ನ ಪಾದಗಳೆಷ್ಟು ಚೆಂದ! ದುಂಡಾದ ನಿನ್ನ ತೊಡೆಗಳು ಕುಶಲ ಶಿಲ್ಪಿಮಾಡಿದ ಸ್ತಂಭ!</verse>
				<verse number="2">ನಿನ್ನ ಹೊಕ್ಕಳು ಮಿಶ್ರಪಾನಕ ತುಂಬಿದ ಗುಂಡುಬಟ್ಟಲು ನಿನ್ನ ಹೊಟ್ಟೆ ನೆಲದಾವರೆಗಳಿಂದ ಅಲಂಕೃತವಾದ ಗೋದಿರಾಶಿಯ ಬಟ್ಟಲು</verse>
				<verse number="3">ನಿನ್ನ ಸ್ತನಗಳೆರಡೂ ಹುಲ್ಲೆಯ ಅವಳಿಮರಿಗಳು.</verse>
				<verse number="4">ದಂತದ ಗೋಪುರ ನಿನ್ನ ಕೊರಳು ನಿನ್ನ ಕಣ್ಣುಗಳು ಹೋಷ್ಬೋನಿನಲ್ಲಿನ ಬತ್‍ರಬ್ಬೀಮ್‍ ಬಾಗಿಲ ಬಳಿ ಇರುವ ಕೊಳಗಳು ನಿನ್ನ ಮೂಗು ದಮಸ್ಕದ ಕಡೆ ಇರುವ ಲೆಬನೋನಿನ ಬುರುಜು.</verse>
				<verse number="5">ನಿನ್ನ ಶಿರ ಎತ್ತರವಾದ ಕಾರ್ಮೆಲ್ ಶಿಖರದಂತೆ ಗಂಭೀರ ನಿನ್ನ ತಲೆಗೂದಲಿಗಿದೆ ಥಳಥಳಿಸುವ ನುಣುಪು ಹೊಳಪಿನ ಬಣ್ಣ ತನ್ನ ತೆಕ್ಕೆಯಲ್ಲಿ ಅರಸನನೇ ಸೆರೆಹಿಡಿಯುವಂಥ ಆಕರ್ಷಣ.</verse>
				<verse number="6">ಪ್ರೇಮವೇ, ಸಕಲ ಸೌಭಾಗ್ಯಗಳಿಂದ ನೀನೆಷ್ಟು ಸುಂದರ? ನೀನೆಷ್ಟು ಮನೋಹರ!</verse>
				<verse number="7">ನೀಳವಾದ ನಿನ್ನ ಆಕಾರವು ಖರ್ಜೂರದ ಮರವು ನಿನ್ನ ಸ್ತನಗಳು ಅದರ ಗೊಂಚಲುಗಳು.</verse>
				<verse number="8">ಆ ಮರವನು ಹತ್ತಿ ಹಿಡಿಯುವೆ ರೆಂಬೆಗಳನು ನಿನ್ನ ಸ್ತನಗಳು ನನಗೆ ದ್ರಾಕ್ಷಿಯ ಗೊಂಚಲುಗಳು ಸೇಬುಹಣ್ಣಿನ ಪರಿಮಳದಂತೆ ನಿನ್ನ ಉಸಿರು! ನಲ್ಲೆ:</verse>
				<verse number="9">ನಿನ್ನ ಚುಂಬನ ಶ್ರೇಷ್ಠವಾದ ಮಧುಪಾನ ನನ್ನ ಇನಿಯನ ಬಾಯಲ್ಲಿಳಿಯಲಿ ಆ ರಸಪಾನ ನಿದ್ರಿಸುವವನಾ ತುಟಿಗಳಲಿ ಹರಿಯಲಿ ಆ ಪಾನ!</verse>
				<verse number="10">ನಾನು ನನ್ನ ನಲ್ಲನ ನಲ್ಲೆ ಆತನ ಆಸೆ ನನ್ನ ಮೇಲೆ!</verse>
				<verse number="11">ಎನ್ನಿನಿಯನೇ, ಬಾ ಹೋಗೋಣ ವನಕೆ ಗ್ರಾಮಾಂತರ ಪ್ರದೇಶದಲ್ಲಿ ವಾಸಿಸುವುದಕೆ.</verse>
				<verse number="12">ಬೆಳಗ್ಗೆ ಹೊರಟು ತೋಟಗಳಿಗೆ ಹೋಗೋಣ ಬಾ ದ್ರಾಕ್ಷಿ ಚಿಗುರಿದೆಯೋ, ಅದರ ಹೂ ಅರಳಿದೆಯೋ ದಾಳಿಂಬೆ ಹೂ ಬಿಟ್ಟಿದೆಯೋ ನೋಡೋಣ ಬಾ ಅಲ್ಲೆ ನಿನಗೆ ನನ್ನ ಪ್ರೀತಿಯನರ್ಪಿಸುವೆ ಬಾ.</verse>
				<verse number="13">ಕಾಮಜನಕ ವೃಕ್ಷಗಳು ಹೀರುತ್ತಿವೆ ಪರಿಮಳ ಒಳ್ಳೊಳ್ಳೆಯ ಬಗೆಬಗೆಯ, ಹಳೆಹೊಸ ಹಣ್ಣುಗಳ ನಾನಿಟ್ಟುಕೊಂಡಿರುವೆ, ಪ್ರಿಯನೇ, ಬಾಗಿಲ ಹತ್ತಿರ ನಿನಗೋಸ್ಕರ.</verse>
			</chapter>
			<chapter number="8">
				<verse number="1">ನಲ್ಲೆ: ನನ್ನ ಸಹೋದರನು, ನನ್ನ ತಾಯಿಯ ಹಾಲ ಕುಡಿದವನು ನೀನಾಗಿದ್ದರೆ ಚೆನ್ನಾಗಿರುತ್ತಿತ್ತಲ್ಲಾ! ಆಗ ನಿನ್ನನ್ನು ಕಂಡು ಹೊರಗಡೆಯೆ ಮುದ್ದಿಸಬಹುದಿತ್ತಲ್ಲಾ ಯಾರು ನನ್ನನ್ನಾಗ ನಿಂದಿಸುತ್ತಿರಲಿಲ್ಲವಲ್ಲಾ!</verse>
				<verse number="2">ಆಗ ನಿನ್ನನ್ನು ಕರೆದುಕೊಂಡು ಹೋಗುತ್ತಿದ್ದೆ ನನ್ನನ್ನು ಹೆತ್ತ ತಾಯಿಯ ಮನೆಗೆ ಅಲ್ಲೆ ಉಪದೇಶ ಮಾಡಬಹುದಾಗಿತ್ತು ನೀನು ನನಗೆ ದ್ರಾಕ್ಷಿಯ ಮಿಶ್ರಪಾನಕವನ್ನು ನಾ ಕೊಡುತ್ತಿದ್ದೆ ನಿನಗೆ ದಾಳಿಂಬೆ ರಸವನ್ನು ಕುಡಿಸುತ್ತಿದ್ದೆ ನಿನಗೆ.</verse>
				<verse number="3">ನನಗೆ ತಲೆದಿಂಬಾಗಲಿ ನಿನ್ನ ಎಡಗೈ ನನ್ನನ್ನು ತಬ್ಬಿಕೊಳ್ಳಲಿ ನಿನ್ನ ಬಲಗೈ.</verse>
				<verse number="4">“ಜೆರುಸಲೇಮಿನ ಮಹಿಳೆಯರೇ, ತಾನೇ ಏಳುವುದಕ್ಕೆ ಮುಂಚೆ ನನ್ನ ಪ್ರಿಯನನ್ನು ಎಚ್ಚರಿಸದಿರಿ ಅವನ ವಿಶ್ರಾಂತಿಗೆ ಭಂಗ ತರದಿರಿ” ಎಂದು ನಾನು ನಿಮಗೆ ಆಣೆಯಿಟ್ಟು ಹೇಳುತ್ತೇನೆ. ಮಹಿಳೆಯರು:</verse>
				<verse number="5">ನಲ್ಲನನ್ನು ಒರಗಿಕೊಂಡು ಅಡವಿಯಿಂದ ಬರುವ ಈಕೆ ಯಾರು? ನಲ್ಲೆ: ಎಬ್ಬಿಸಿದೆ ನಿನ್ನನ್ನು ಸೇಬುಮರದ ಅಡಿಯಲಿ ನಿನ್ನ ತಾಯಿ ಪ್ರಸವವೇದನೆಯಿಂದ ಹಡೆದಾ ಸ್ಥಳದಲಿ ನಿನ್ನನ್ನು ಆಕೆ ಗರ್ಭಧರಿಸಿದಾ ಜಾಗದಲಿ.</verse>
				<verse number="6">ನಿನ್ನ ವೃಕ್ಷದಲಿ, ನಿನ್ನ ಹಸ್ತಗಳಲಿ ಧರಿಸಿಕೊ ನನ್ನನ್ನು ಪ್ರೇಮ ಮುದ್ರೆಯಾಗಿ. ಪ್ರೀತಿ ಮೃತ್ಯುವಿನಷ್ಟು ಶಕ್ತಿಶಾಲಿ! ಮತ್ಸರ ಪಾತಾಳದಷ್ಟು ಕ್ರೂರಿ ಅದರ ಜ್ವಾಲೆ ಬೆಂಕಿಯ ಉರಿ ಧಗಧಗಿಸುವ ಕೋಪಾಗ್ನಿ.</verse>
				<verse number="7">ನಂದಿಸಲಾರವು ಪ್ರೀತಿಯನ್ನು ಜಲರಾಶಿಗಳು ಮುಳುಗಿಸಲಾರವು ಅದನು ಪ್ರವಾಹಗಳು. ಪ್ರೀತಿಯನು ಗಳಿಸಲು ಮನೆಮಾರುಗಳ ಮಾರಿದರೂ ತಿರಸ್ಕಾರವೆ ಅಂಥವನಿಗೆ ಸಿಗುವುದು. ಸೋದರರು:</verse>
				<verse number="8">ಇನ್ನೂ ಸ್ತನ ಬಾರದ ತಂಗಿ ನಮಗಿದ್ದಾಳೆ ನಾವೇನು ಮಾಡೋಣ ಅವಳನ್ನು ವರಿಸಲು ಬಂದರೆ?</verse>
				<verse number="9">ಅವಳೊಂದು ಕೋಟೆಯಾದರೆ ಕಟ್ಟುವೆವು ಬುರುಜನ್ನು ಬೆಳ್ಳಿಯಿಂದ. ಅವಳೊಂದು ಬಾಗಿಲಾದರೆ ಭದ್ರಪಡಿಸುವೆವು ದೇವದಾರು ಮರಗಳಿಂದ. ನಲ್ಲೆ:</verse>
				<verse number="10">ನಾನೊಂದು ಕೋಟೆ, ನನ್ನ ಸ್ತನಗಳೇ ಬುರುಜುಗಳು ಆತನ ದೃಷ್ಟಿಯಲ್ಲಿ ನಾ ಹೊಂದುವೆನು ಶಾಂತಿಯನು ನಲ್ಲೆ:</verse>
				<verse number="11">ಸೊಲೊಮೋನನಿಗಿತ್ತು ಬಾಲ್ಹಾಮೋನಿನಲ್ಲಿ ಒಂದು ದ್ರಾಕ್ಷಾತೋಟ ಅದನು ಗುತ್ತಿಗೆಗೆ ಕೊಡಲು ಮೇಲ್ವಿಚಾರಕರಿಗೆ ವಹಿಸಿದ. ಪ್ರತಿಯೊಬ್ಬ ಗುತ್ತಿಗೆಗಾರ ತೆರಬೇಕಾಗಿತ್ತು ಸಾವಿರ ಬೆಳ್ಳಿನಾಣ್ಯ.</verse>
				<verse number="12">ಸೊಲೊಮೋನನೇ, ಆ ಸಾವಿರ ಬೆಳ್ಳಿನಾಣ್ಯ ನಿನಗೇ ಇರಲಿ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ. ಆದರೆ ನನ್ನ ದ್ರಾಕ್ಷಾತೋಟ ನನ್ನ ವಶದಲೇ ಇರಲಿ.</verse>
				<verse number="13">ತೋಟಗಳಲಿ ವಾಸವಾಗಿರುವವಳೇ, ನನಗೆ ಕೇಳಮಾಡು ನಿನ್ನ ದನಿ ಗೆಳೆಯರು ಕಾದಿದ್ದಾರೆ ಅದಕ್ಕಾಗಿ. ನಲ್ಲೆ:</verse>
				<verse number="14">ಸುಗಂಧಸಸ್ಯ ಪರ್ವತದಿಂದಲೆ ಜಿಂಕೆಯಂತೆ, ಪ್ರಾಯದ ಹುಲ್ಲೆಯಂತೆ ತ್ವರೆಮಾಡಿ ಬಾ ನನ್ನಿನಿಯನೇ.</verse>
			</chapter>
		</book>
		<book number="23">
			<chapter number="1">
				<verse number="1">ಜುದೇಯ ನಾಡಿನ ಅರಸರಾಗಿದ್ದ ಉಜ್ಜೀಯ, ಯೋತಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಜುದೇಯ ಮತ್ತು ಜೆರುಸಲೇಮ್ ನಗರವನ್ನು ಕುರಿತು ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ ಇದು:</verse>
				<verse number="2">ಆಕಾಶಮಂಡಲವೇ, ಕೇಳು; ಭೂಮಂಡಲವೇ, ಆಲಿಸು; ಸರ್ವೇಶ್ವರಸ್ವಾಮಿ ಆಡುತ್ತಿರುವ ಮಾತುಗಳಿಗೆ ಕಿವಿಗೊಡು: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹವೆಸಗಿದ್ದಾರೆ.</verse>
				<verse number="3">ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ಬಲ್ಲವು. ಆದರೆ ನನ್ನ ಪ್ರಜೆಗಳಾದ ಇಸ್ರಯೇಲರಿಗೆ ಅಷ್ಟೂ ತಿಳಿದಿಲ್ಲ. ಅವರಿಗೆ ಏನೂ ತಿಳಿಯುವುದಿಲ್ಲ.</verse>
				<verse number="4">ಎಲೈ ಪಾಪಿಷ್ಠ ಜನವೇ, ದೋಷಭರಿತ ಪ್ರಜೆಯೇ, ದುಷ್ಟಪೀಳಿಗೆಯೇ, ಭ್ರಷ್ಟಸಂತಾನವೇ, ನಿಮ್ಮ ಗತಿಯನ್ನು ಏನೆಂದು ಹೇಳಲಿ. ನೀವು ಸರ್ವೇಶ್ವರನನ್ನು ತೊರೆದಿದ್ದೀರಿ. ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಧಿಕ್ಕರಿಸಿದ್ದೀರಿ. ಅವರಿಗೆ ಬೆನ್ನುಮಾಡಿ ಬೇರೆಯಾಗಿದ್ದೀರಿ.</verse>
				<verse number="5">ಏಕೆ ಹೆಚ್ಚು ಹೆಚ್ಚಾಗಿ ದ್ರೋಹಗೈದು ದಂಡನೆಗೆ ಗುರಿ ಆಗುತ್ತೀರಿ? ನಿಮ್ಮ ತಲೆತುಂಬ ಗಾಯ, ನಿಮ್ಮ ಹೃದಯವೆಲ್ಲ ದುರ್ಬಲ.</verse>
				<verse number="6">ಅಂಗಾಲಿನಿಂದ ನಡುನೆತ್ತಿಯವರೆಗೆ ಪೆಟ್ಟು ಬಾಸುಂಡೆ, ಮಾಗದ ಗಾಯಗಳೇ ಹೊರತು ಮತ್ತೇನೂ ಅಲ್ಲ. ಅವನ್ನು ತೊಳೆದು ಕಟ್ಟಿಲ್ಲ. ಎಣ್ಣೆ ಸವರಿ ಮೃದುವಾಗಿಸಿಲ್ಲ.</verse>
				<verse number="7">ನಿಮ್ಮ ನಾಡು ಹಾಳುಬಿದ್ದಿದೆ: ನಿಮ್ಮ ಪಟ್ಟಣಗಳು ಸುಟ್ಟು ಭಸ್ಮವಾಗಿವೆ. ನಿಮ್ಮ ಕಣ್ಮುಂದೆಯೆ ನಿಮ್ಮ ಭೂಮಿಯನ್ನು ಅನ್ಯಜನರು ಕಬಳಿಸುತ್ತಿದ್ದಾರೆ. ಅನ್ಯದೇಶಗಳು ನಾಶವಾದಂತೆಯೇ ನಿಮ್ಮ ನಾಡು ಹಾಳಾಗಿದೆ.</verse>
				<verse number="8">ಸಿಯೋನ್ ನಗರವೊಂದೇ ಮುತ್ತಿಗೆಗೆ ತುತ್ತಾದ ಪಟ್ಟಣದಂತೆ, ದ್ರಾಕ್ಷಾತೋಟದ ಅಟ್ಟಣಿಯಂತೆ, ಸೌತೆ ಹೊಲದ ಗುಡಿಸಿಲಿನಂತೆ ಸುರಕ್ಷತೆಯ ಅವಕಾಶವಿಲ್ಲದೆ ಇದೆ.</verse>
				<verse number="9">ಸೇನಾಧೀಶ್ವರ ಸರ್ವೇಶ್ವರ ಕೆಲವು ಜನರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ, ಗೊಮೋರದ ದುರ್ದೆಶೆಯೇ ನಮಗೆ ಸಂಭವಿಸುತ್ತಿತ್ತು.</verse>
				<verse number="10">ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ.</verse>
				<verse number="11">ಸ್ವಾಮಿ ಇಂತೆನ್ನುತ್ತಾರೆ: “ನೀವು ಅರ್ಪಿಸುವ ಅಸಂಖ್ಯಾತ ಬಲಿದಾನಗಳಿಂದ ನನಗೇನು ಪ್ರಯೋಜನ? ಟಗರುಗಳು, ಸರ್ವಾಂಗಹೋಮ, ಪುಷ್ಟಪಶುಗಳ ಕೊಬ್ಬು ಇವೆಲ್ಲ ನನಗೆ ಬೇಸರ. ಹೋತಹೋರಿಗಳ, ಕುರಿಮರಿಗಳ ರಕ್ತ ನನಗೆ ತಾತ್ಸಾರ.</verse>
				<verse number="12">ನನ್ನ ಸನ್ನಿಧಾನಕ್ಕೆ ಬರುವಾಗ ಇದನ್ನೆಲ್ಲ ತರಬೇಕೆಂದು ನಿಮಗೆ ಹೇಳಿದವರಾರು?</verse>
				<verse number="13">ನಿಮ್ಮ ನೈವೇದ್ಯಗಳನ್ನು ಇನ್ನು ತರಬೇಡಿ, ಅವು ವ್ಯರ್ಥ. ನಿಮ್ಮ ಧೂಪಾರತಿ ನನಗೆ ಅಸಹ್ಯ. ನೀವು ಆಚರಿಸುವ ಹಬ್ಬ ಹುಣ್ಣಿಮೆ, ಸಬ್ಬತ್ ವಿಶ್ರಾಂತಿ, ನಿಮ್ಮ ಸಭೆಕೂಟಗಳು ನನಗೆ ಬೇಡ. ಅಧರ್ಮದಿಂದ ಕೂಡಿದ ಇಂಥ ಸಮಾರಂಭಗಳು ನನಗೆ ಇಷ್ಟವಿಲ್ಲ.</verse>
				<verse number="14">ನಿಮ್ಮ ಹಬ್ಬ ಹುಣ್ಣಿಮೆಗಳು, ಉತ್ಸವ ದಿನಗಳು ನನ್ನ ಮನಕ್ಕೆ ವಿರುದ್ಧ, ಹೊರಲಾಗದ ಭಾರ, ಸಹಿಸಲಾಗದ ಬೇಸರ.</verse>
				<verse number="15">ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ.</verse>
				<verse number="16">ತೊಳೆದುಕೊಳ್ಳಿರಿ, ನಿಮ್ಮನ್ನೆ ಶುದ್ಧಮಾಡಿಕೊಳ್ಳಿರಿ. ಕಣ್ಣಿಗೆ ಕಟ್ಟಿದಂತಿರುವ ನಿಮ್ಮ ದುಷ್ಕೃತ್ಯಗಳು ನೀಗಿಹೋಗಲಿ.</verse>
				<verse number="17">ಕೇಡನ್ನು ಬಿಟ್ಟು ಒಳಿತನ್ನು ಕೈಗೊಳ್ಳಿರಿ. ನ್ಯಾಯನೀತಿಗಳಲ್ಲಿ ನಿರತರಾಗಿರಿ. ಹಿಂಸಾತ್ಮಕರನ್ನು ತಿದ್ದಿ ಸರಿಪಡಿಸಿರಿ. ಅನಾಥರಿಗೆ ನ್ಯಾಯ ದೊರಕಿಸಿರಿ. ವಿಧವೆಯರ ಪರವಾಗಿ ವಾದಿಸಿರಿ.</verse>
				<verse number="18">ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬನ್ನಿರಿ, ಈಗ ವಾದಿಸೋಣ. ನಿಮ್ಮ ಪಾಪಗಳು ಕಡುಗೆಂಪಾಗಿದ್ದರೂ ಹಿಮದಂತೆ ಬಿಳುಪಾಗುವುವು. ರಕ್ತಗೆಂಪಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವುವು.</verse>
				<verse number="19">ನೀವು ಮನಃಪೂರ್ವಕವಾಗಿ ನನಗೆ ವಿಧೇಯರಾದರೆ ಈ ನಾಡಿನ ಸತ್ಫಲವನ್ನು ಸವಿಯುವಿರಿ.</verse>
				<verse number="20">ಇದಕ್ಕೊಪ್ಪದೆ ಪ್ರತಿಭಟಿಸಿದ್ದೇ ಆದರೆ, ಸಾವಿಗೆ ತುತ್ತಾಗುವಿರಿ. ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”</verse>
				<verse number="21">ಅಯ್ಯೋ, ಸುವ್ರತೆಯಂತಿದ್ದ ನಗರಿ ಈಗ ಸೂಳೆಯಂತಿದ್ದಾಳಲ್ಲ! ನ್ಯಾಯನೀತಿವಂತರಿಗೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ಬೀಡಾಗಿದ್ದಾಳಲ್ಲಾ!</verse>
				<verse number="22">ಎಲೌ ನಗರಿಯೇ, ನಿನ್ನ ಬೆಳ್ಳಿ ಕಪ್ಪಾಗಿದೆ. ನಿನ್ನ ದ್ರಾಕ್ಷಾರಸ ನೀರಾಗಿದೆ.</verse>
				<verse number="23">ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.</verse>
				<verse number="24">ಇಂತಿರಲು ಒಡೆಯರು, ಸೇನಾಧೀಶ್ವರರು, ಇಸ್ರಯೇಲರ ಪರಾಕ್ರಮಿಯು ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ನನ್ನ ಶತ್ರುಗಳಾದ ನಿಮ್ಮ ಮೇಲೆ ಸೇಡು ತೀರಿಸುವೆನು. ನನ್ನ ವಿರೋಧಿಗಳಾದ ನಿಮ್ಮನ್ನು ಸದೆಬಡಿದು ಶಾಂತನಾಗಿರುವೆನು.</verse>
				<verse number="25">ನಿಮ್ಮ ಮೇಲೆ ಕೈಮಾಡುವೆನು. ನಿಮ್ಮ ಲೋಹವನ್ನು ಪುಟಹಾಕಿ ನಿಮ್ಮ ಕಲ್ಮಷವನ್ನು ಪೂರ್ತಿಯಾಗಿ ಕರಗಿಸಿಬಿಡುವೆನು. ಕಂದುಕೆಸರನ್ನೆಲ್ಲ ತೊಡೆದುಹಾಕುವೆನು.</verse>
				<verse number="26">ಪೂರ್ವದಲ್ಲಿದ್ದಂತೆ ನಿಮಗೆ ನ್ಯಾಯಾಧಿಪತಿಗಳನ್ನೂ ಮಂತ್ರಿಗಳನ್ನೂ ಮತ್ತೆ ನೇಮಿಸುವೆನು. ಆಗ ಜೆರುಸಲೇಮ್ ‘ಧರ್ಮಪುರಿ’, ‘ಸುವ್ರತನಗರಿ’ ಎನಿಸಿಕೊಳ್ಳುವುದು.</verse>
				<verse number="27">ಸಿಯೋನಿನ ಉದ್ಧಾರ ನ್ಯಾಯನೀತಿಯಿಂದ; ಅದಕ್ಕೆ ಹಿಂದಿರುಗುವವರ ಉದ್ಧಾರ ಸತ್ಸಂಬಂಧದಿಂದ;</verse>
				<verse number="28">ನಾಶವಾಗುವರು ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ; ನಿರ್ಮೂಲವಾಗುವರು ಸ್ವಾಮಿಯನ್ನು ತೊರೆದವರು ನಿಶ್ಚಯವಾಗಿ.</verse>
				<verse number="29">ನೀವು ಬಯಸಿದ ಎಲ್ಲಾ ಮರಗಳನ್ನು ಪೂಜಿಸಿದ್ದಕ್ಕಾಗಿ ಹೇಸುವಿರಿ: ಪವಿತ್ರ ವನಗಳನ್ನು ನಿರ್ಮಿಸಿದ್ದಕ್ಕಾಗಿ ನಾಚಿಕೆಪಡುವಿರಿ.</verse>
				<verse number="30">ಎಲೆ ಒಣಗಿದ ಮರಗಳಂತೆ ಆಗುವಿರಿ. ಜಲವಿಲ್ಲದ ವನದಂತಾಗುವಿರಿ.</verse>
				<verse number="31">ಒಣಹುಲ್ಲಿನ ಮೆದೆಗೆ ಬೆಂಕಿಯ ಕಿಡಿಬಿದ್ದು ಸುಟ್ಟುಹೋಗುವಂತೆ ನಿಮ್ಮಲ್ಲಿನ ಬಲಿಷ್ಠರು ತಮ್ಮ ದುಷ್ಕೃತ್ಯಗಳಿಂದಲೇ ನಾಶವಾಗುವರು. ಈ ವಿನಾಶವನ್ನೂ ಯಾರಿಂದಲೂ ತಡೆಗಟ್ಟಲಾಗದು.</verse>
			</chapter>
			<chapter number="2">
				<verse number="1">ಜುದೇಯ ಮತ್ತು ಜೆರುಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನು ಕಂಡ ದರ್ಶನದಲ್ಲಿ ಕೇಳಿಬಂದ ದೈವೋಕ್ತಿ:</verse>
				<verse number="2">ಸರ್ವೇಶ್ವರನ ಶ್ರೀನಿವಾಸದ ಪರ್ವತವು ಅಂತಿಮ ಕಾಲದಂದು ಪ್ರತಿಷ್ಠೆಗೊಳ್ಳುವುದು, ಗುಡ್ಡಬೆಟ್ಟಗಳಿಗಿಂತ ಎತ್ತರವಾಗಿ ಬೆಳೆದು ಬರುವುವು ಅದರತ್ತ ಸಕಲ ರಾಷ್ಟ್ರಗಳು ಜಲಧಾರೆಯಂತೆ ಹರಿದು ಬರುವುವು.</verse>
				<verse number="3">ದೇಶವಿದೇಶಗಳವರು ಬಂದು ಹೇಳುವರು ಹೀಗೆ: “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.</verse>
				<verse number="4">ಬಗೆಹರಿಸುವನು ದೇಶದೇಶಗಳ ವ್ಯಾಜ್ಯವನು ತೀರಿಸುವನು ರಾಷ್ಟ್ರರಾಷ್ಟ್ರಗಳ ನ್ಯಾಯವನು ಹಾಕುವರವರು ಕುಲುಮೆಗೆ ತಮ್ಮಾಯುಧಗಳನು. ಮಾರ್ಪಡಿಸುವರು ಕತ್ತಿಗಳನು ನೇಗಿಲ ಗುಳಗಳನ್ನಾಗಿ ಭರ್ಜಿಗಳನು ಕುಡುಗೋಲುಗಳನ್ನಾಗಿ. ಕತ್ತಿಯ ನೆತ್ತರು ಜನಾಂಗ ಜನಾಂಗದೆದುರಿಗೆ ಯುದ್ಧವಿದ್ಯೆಯ ಕಲಿಕೆ ಅಗತ್ಯವಿರದು ಅವರಿಗೆ.</verse>
				<verse number="5">ಯಕೋಬ ಮನೆತನದವರೇ, ಬನ್ನಿ, ಸ್ವಾಮಿಯ ಬೆಳಕಿನಲ್ಲಿ ನಡೆಯೋಣ.</verse>
				<verse number="6">ಹೇ ಸರ್ವೇಶ್ವರಾ ಯಕೋಬ ಮನೆತನದವರನ್ನು ನೀವು ಕೈ ಬಿಟ್ಟಿದ್ದೀರಿ. ಏಕೆಂದರೆ ಅವರು ಪೌರಸ್ತ್ಯರಂತೆ ಮಾಟಮಂತ್ರ ಮಾಡುವವರು. ಫಿಲಿಷ್ಟಿಯರಂತೆ ಕಣಿಹೇಳುವವರು, ಅನ್ಯದೇಶಿಯರಂತೆ ಆಚಾರವಿಚಾರಗಳನ್ನು ಅನುಕರಿಸುವವರು ಆಗಿಬಿಟ್ಟಿದ್ದಾರೆ.</verse>
				<verse number="7">ನಾಡು ಬೆಳ್ಳಿಬಂಗಾರದಿಂದ ತುಂಬಿಹೋಗಿದೆ. ಜನರ ನಿಧಿನಿಕ್ಷೇಪಗಳಿಗೆ ಮಿತಿಯಿಲ್ಲದಂತಿದೆ. ಎಲ್ಲಾ ಕಡೆ ಅಶ್ವಬಲ ಯಥೇಚ್ಛವಾಗಿದೆ. ರಥಗಳು ಅಪಾರವಾಗಿವೆ.</verse>
				<verse number="8">ದೇಶದಲ್ಲಿ ವಿಗ್ರಹಗಳು ತುಂಬಿ ತುಳುಕುತ್ತಿವೆ. ಜನರು ತಮ್ಮ ಕೈಯಿಂದ ಮಾಡಿದ ವಿಗ್ರಹಗಳನ್ನೇ ಪೂಜಿಸುತ್ತಿದ್ದಾರೆ.</verse>
				<verse number="9">ಮಾನವನು ತಗ್ಗಿಹೋಗಿದ್ದಾನೆ, ಅಧೋಗತಿಗೆ ಇಳಿದಿದ್ದಾನೆ. ಸ್ವಾಮೀ, ಅವನಿಗೆ ಕ್ಷಮೆ ನೀಡಬೇಡಿ.</verse>
				<verse number="10">ಸ್ವಾಮಿಯ ಭಯಂಕರ ಕೋಪಕ್ಕೆ ಅಂಜಿ, ಆ ಮಹೋನ್ನತನ ವೈಭವಕ್ಕೆ ಹೆದರಿ ಬಂಡೆಯ ಗುಹೆಗಳೊಳಗೆ ನುಗ್ಗಿರಿ, ನೆಲದ ಬಿಲಗಳಲ್ಲಿ ಅವಿತುಕೊಳ್ಳಿರಿ.</verse>
				<verse number="11">ಜನಸಾಮಾನ್ಯರ ಅಟ್ಟಹಾಸವನ್ನು ಅಡಗಿಸಲಾಗುವುದು, ಪ್ರಮುಖರ ಗರ್ವ ಕಮರಿಹೋಗುವುದು, ಸ್ವಾಮಿ ಮಾತ್ರ ಅಂದು ಉನ್ನತೋನ್ನತವಾಗಿರುವರು.</verse>
				<verse number="12">ಸೇನಾಧೀಶ್ವರ ಸರ್ವೇಶ್ವರ ದಿನವೊಂದನ್ನು ಗೊತ್ತುಮಾಡಿದ್ದಾರೆ. ಅಹಂಕಾರದಿಂದ ಉಬ್ಬಿಹೋದವರಿಗೆ, ಉದ್ಧಟತನದಿಂದ ಕೊಬ್ಬಿಹೋದವರಿಗೆ,</verse>
				<verse number="13">ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲ ದೇವದಾರು ವೃಕ್ಷಗಳಿಗೆ, ಬಾಷಾನಿನ ಎಲ್ಲಾ ಅಲ್ಲೋನ್ ಮರಗಳಿಗೆ,</verse>
				<verse number="14">ಉನ್ನತವಾಗಿರುವ ಮೇರುಪರ್ವತಗಳಿಗೆ, ಎಲ್ಲಾ ಗುಡ್ಡಬೆಟ್ಟಗಳಿಗೆ,</verse>
				<verse number="15">ಸಮಸ್ತ ಗುಮ್ಮಟ ಗೋಪುರಗಳಿಗೆ, ಸಮಸ್ತ ಕೋಟೆಕೊತ್ತಲಗಳಿಗೆ,</verse>
				<verse number="16">ಎಲ್ಲಾ ದೊಡ್ಡ ದೊಡ್ಡ ಹಡಗುಗಳಿಗೆ, ಎಲ್ಲಾ ಸುಂದರವಾದ ನೌಕೆಗಳಿಗೆ, ಆ ದಿನವು ತಪ್ಪದೆ ಬರುವುದು.</verse>
				<verse number="17">ಜನಸಾಮಾನ್ಯರ ಅಟ್ಟಹಾಸ ಕುಗ್ಗಿಹೋಗುವುದು, ಜನಪ್ರಮುಖರ ಅಹಂಕಾರ ತಗ್ಗಿಹೋಗುವುದು; ಸರ್ವೇಶ್ವರ ಮಾತ್ರ ಆ ದಿನದಂದು ಉನ್ನತೋನ್ನತವಾಗಿರುವರು.</verse>
				<verse number="18">ವಿಗ್ರಹಗಳು ಸಂಪೂರ್ಣವಾಗಿ ಮಾಯವಾಗುವುವು.</verse>
				<verse number="19">ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ಅವಿತುಕೊಳ್ಳುವರು ಜನರು ಕಲ್ಲುಬಂಡೆಗಳ ಗುಹೆಗಳಲ್ಲಿ, ನೆಲದ ಹಳ್ಳಕೊಳ್ಳಗಳಲ್ಲಿ.</verse>
				<verse number="20">ಆ ದಿನ ಬಂದಾಗ ಮಾನವರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿ ಹೆಗ್ಗಣಗಳ ಬಿಲಗಳಲ್ಲಿ ಬಿಸಾಡುವರು.</verse>
				<verse number="21">ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ನುಗ್ಗುವರು ಜನರು ಕಲ್ಲುಬಂಡೆಗಳ ಸಂದುಗೊಂದುಗಳಲ್ಲಿ, ಶಿಲೆಗಳ ಸೀಳುಪಾಳುಗಳಲ್ಲಿ.</verse>
				<verse number="22">ನರಮಾನವರಲ್ಲಿ ಇಡದಿರು ಭರವಸೆಯನ್ನು; ಯಾವ ಗಣನೆಗೆ ಬಂದಾನು ಅವನು? ಮೂಗಿನಲ್ಲಿ ಉಸಿರಾಡುವ ಅಲ್ಪಪ್ರಾಣಿ ಅವನು!</verse>
			</chapter>
			<chapter number="3">
				<verse number="1">ಇಗೋ, ಪ್ರಭುವೂ ಸೇನಾಧೀಶ್ವರ ಆದ ಸರ್ವೇಶ್ವರಸ್ವಾಮಿ ಜೆರುಸಲೇಮ್ ಮತ್ತು ಜುದೇಯದ ಜನರ ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲ ತೆಗೆದುಬಿಡುವರು.</verse>
				<verse number="2">ಧೀರರು ಮತ್ತು ಯೋಧರು, ನ್ಯಾಯಾಧಿಪತಿಗಳು ಮತ್ತು ಪ್ರವಾದಿಗಳು, ಶಕುನದವರು ಮತ್ತು ಶಾಸಕರು,</verse>
				<verse number="3">ದಳಪತಿಗಳು ಮತ್ತು ಗಣ್ಯವ್ಯಕ್ತಿಗಳು, ಮಂತ್ರಿಗಳು ಮತ್ತು ಮಂತ್ರತಂತ್ರದವರು - ಎಲ್ಲರನ್ನು ತೊಲಗಿಸಿಬಿಡುವರು.</verse>
				<verse number="4">ಸರ್ವೇಶ್ವರ ಅವರಿಗೆ ಬಾಲಕರನ್ನು ಪಾಲಕರನ್ನಾಗಿಸಿ, ಹಸುಳೆಗಳು ಅವರನ್ನು ಆಳುವಂತೆ ಮಾಡುವರು.</verse>
				<verse number="5">ಪ್ರಜೆಗಳೆಲ್ಲ ಪರಸ್ಪರ ವಿರೋಧಿಗಳಾಗಿ, ಒಬ್ಬರನ್ನೊಬ್ಬರು ಹಿಂಸಿಸುವರು. ನೆರೆಹೊರೆಯವರನ್ನು ನಿಂದಿಸುವರು. ಕಿರಿಯರು ಹಿರಿಯರನ್ನು, ದುಷ್ಟರು ಶಿಷ್ಟರನ್ನು ಹೀಯಾಳಿಸುವರು.</verse>
				<verse number="6">ಕಾಲ ಬರುವುದು. ಆಗ ಒಬ್ಬನು ತನ್ನ ಸಹೋದರರಲ್ಲೊಬ್ಬನಿಗೆ: “ನಿನಗೆ ನಿಲುವಂಗಿಯಾದರೂ ಇದೆ. ನೀನೇ ನಮಗೆ ಒಡೆಯನಾಗು. ಹಾಳುಬಿದ್ದ ಈ ಊರಿಗೆ ನೀನೇ ಗೌಡನಾಗು,” ಎಂದು ಹುಟ್ಟುಮನೆಯಲ್ಲೇ ಒತ್ತಾಯಿಸುತ್ತಾ ಹೇಳುವನು.</verse>
				<verse number="7">ಆಗ ಆ ಸಹೋದರನು ಹೂಂಕರಿಸಿ, “ಈ ನಾಡಿಗೆ ವ್ರಣವೈದ್ಯನಾಗಿರಲು ನನಗಿಷ್ಟವಿಲ್ಲ. ಮನೆಯಲ್ಲಿ ತಿನ್ನಲು ಅನ್ನವಿಲ್ಲ, ಉಡಲು ಬಟ್ಟೆಯಿಲ್ಲ. ನನ್ನನ್ನು ಜನನಾಯಕನನ್ನಾಗಿ ಮಾಡುವುದು ಬೇಡ,” ಎಂದು ತಿರಸ್ಕಾರದಿಂದ ಉತ್ತರಿಸುವನು.</verse>
				<verse number="8">ಜೆರುಸಲೇಮ್ ನಗರ ಹಾಳಾಯಿತು. ಜುದೇಯ ನಾಡು ಬಿದ್ದುಹೋಯಿತು. ಜನರ ನಡೆನುಡಿಗಳೆಲ್ಲ ಸ್ವಾಮಿಗೆ ವಿರುದ್ಧವಾದವು. ಸ್ವಾಮಿಯ ಮಹಿಮಾ ಸಾನ್ನಿಧ್ಯಕ್ಕೆ ಪ್ರತೀಕೂಲವಾದವು.</verse>
				<verse number="9">ಅವರ ಮುಖಲಕ್ಷಣವೇ ಅವರ ವಿರುದ್ಧ ಸಾಕ್ಷಿಯಾಗಿದೆ. ಅವರು ಸೊದೋಮಿನವರಂತೆ ತಮ್ಮ ಪಾಪಗಳನ್ನು ಮುಚ್ಚುಮರೆಯಿಲ್ಲದೆ ಮೆರೆಯಿಸುತ್ತಾರೆ. ಅಯ್ಯೋ, ಅವರಿಗೆ ಕೇಡು! ತಮಗೆ ತಾವೇ ಕೇಡನ್ನು ಬರಮಾಡಿಕೊಂಡಿದ್ದಾರೆ.</verse>
				<verse number="10">ಸಜ್ಜನರಿಗೆ ಶುಭವೆಂದು ಸಾರಿರಿ. ಅವರು ತಮ್ಮ ಕ್ರಿಯೆಗಳ ಸತ್ಫಲವನ್ನು ಸವಿಯುತ್ತಾರೆ.</verse>
				<verse number="11">ದುರ್ಜನರಿಗೆ ಧಿಕ್ಕಾರ! ಅವರ ಕೃತ್ಯಗಳಿಗೆ ಕಹಿಫಲ ದೊರಕುತ್ತದೆ.</verse>
				<verse number="12">ನನ್ನ ಜನರನ್ನೋ ಬಾಧಿಸುತ್ತಿರುವವರು ಹುಡುಗರು; ಆಳುತ್ತಿರುವವರೋ ಹೆಂಗಳೆಯರು. ಎಲೈ ನನ್ನ ಜನರೇ, ನಿಮ್ಮ ನಾಯಕರು ನಿಮ್ಮನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ನಿಮ್ಮ ಮಾರ್ಗವನ್ನು ವಕ್ರಗೊಳಿಸುತ್ತಿದ್ದಾರೆ.</verse>
				<verse number="13">ಸ್ವಾಮಿ ವಾದಿಸುವುದಕ್ಕೆ ಸಿದ್ಧವಿದ್ದಾರೆ. ಅವರು ಜನರ ನ್ಯಾಯವನ್ನು ನಿರ್ಣಯಿಸುವುದಕ್ಕೆ ತಯಾರಾಗಿದ್ದಾರೆ.</verse>
				<verse number="14">ಸ್ವಾಮಿ ಜನರ ನಾಯಕರನ್ನೂ ಅಧಿಪತಿಗಳನ್ನೂ ನ್ಯಾಯವಿಚಾರಣೆಗೆ ಗುರಿಪಡಿಸುವರು. “ನೀವು ದ್ರಾಕ್ಷಾತೋಟವನ್ನು ಕಬಳಿಸಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದನ್ನು ಮನೆಗಳಲ್ಲಿ ತುಂಬಿಸಿಕೊಂಡಿದ್ದೀರಿ.</verse>
				<verse number="15">ನೀವು ನನ್ನ ಜನರನ್ನು ನಸುಕಿಬಿಟ್ಟಿದ್ದೀರಲ್ಲವೇ? ಬಡವರನ್ನು ಹಿಸುಕಿಬಿಟ್ಟಿದ್ದೀರಲ್ಲವೇ?” ಎಂದು ಸೇನಾಧೀಶ್ವರ ಸರ್ವೇಶ್ವರಸ್ವಾಮಿ ವಾದಿಸುತ್ತಾರೆ.</verse>
				<verse number="16">ಸ್ವಾಮಿ ಇಂತೆನ್ನುತ್ತಾರೆ: ಸಿಯೋನಿನ ಮಹಿಳೆಯರ ಒನಪು ಒಯ್ಯಾರಗಳನ್ನು ನೋಡಿರಿ. ಅವರು ಕತ್ತುತೂಗುತ್ತಾ, ಕಡೆಗಣ್ಣು ಹಾಕುತ್ತಾ, ಕುಲುಕಿ ಹೆಜ್ಜೆಯಿಡುತ್ತಾ, ಕಾಲುಗೆಜ್ಜೆ ಜಣಜಣಿಸುತ್ತಾ ನಡೆಯುತ್ತಾರೆ.</verse>
				<verse number="17">ಒಡೆಯರಾದ ಸ್ವಾಮಿ ಅವರ ನಡುನೆತ್ತಿಯನ್ನು ಹುಣ್ಣಾಗಿಸಿ ಬೋಳುಮಾಡುವರು. ಅವರ ಮಾನವನ್ನು ಬಯಲುಮಾಡುವರು.</verse>
				<verse number="18">ದಿನ ಬರುವುದು, ಆಗ ಸ್ವಾಮಿ ಅವರ ಬೆಡಗಿನ ಆಭರಣಗಳೆಲ್ಲವನ್ನು ತೆಗೆದುಹಾಕುವರು. ಕಾಲಂದಿಗೆ, ತುರುಬು, ಬಲೆ, ಅರ್ಧಚಂದ್ರ,</verse>
				<verse number="19">ಜುಮಕಿ, ಬಳೆ, ಕುಲಾವಿ, ಶಿರವಸ್ತ್ರ,</verse>
				<verse number="20">ಕಂಠವಸ್ತ್ರ, ಕಾಲಸರಪಣಿ, ಡಾಬು, ಸುಗಂಧ ಭರಣಿ, ತಾಯಿತಿ,</verse>
				<verse number="21">ಮುದ್ರೆ ಉಂಗುರ, ಮೂಗುತಿ,</verse>
				<verse number="22">ಹಬ್ಬದ ಉಡಿಗೆ ತೊಡಿಗೆ, ಮೇಲಂಗಿ, ಶಾಲು, ಕೈಚೀಲ,</verse>
				<verse number="23">ನವಿರು ಜಾಲರಿ, ನಾರುಮಡಿ, ಮುಡಿ ಮುಕುಟ, ಮೇಲ್ವಸ್ತ್ರ ಈ ಸೊಗಸು ಭೂಷಣಗಳನ್ನೆಲ್ಲಾ ತೆಗೆದುಹಾಕುವರು.</verse>
				<verse number="24">ಇದಲ್ಲದೆ ಸುಗಂಧಕ್ಕೆ ಬದಲಾಗಿ ದುರ್ಗಂಧ, ನಡುಪಟ್ಟಿಗೆ ಬದಲಾಗಿ ಹುರಿಹಗ್ಗ, ಜಡೆದಲೆಗೆ ಬದಲಾಗಿ ಬೋಳುದಲೆ, ರೇಷ್ಮೆಬಟ್ಟೆಗೆ ಬದಲಾಗಿ ಗೋಣಿತಟ್ಟು, ಬೆಡಗಿಗೆ ಬದಲಾಗಿ ಬೆತ್ತಲೆ, ಇಂಥ ಗತಿ ಅವರಿಗೆ ಬಂದೊದಗುವುದು.</verse>
				<verse number="25">ಎಲೌ, ಸಿಯೋನ್ ನಗರಿಯೇ, ನಿನ್ನ ವೀರರು ಖಡ್ಗಕ್ಕೆ ತುತ್ತಾಗುವರು; ನಿನ್ನ ಯೋಧರು ಯುದ್ಧದಲ್ಲಿ ಮಡಿಯುವರು.</verse>
				<verse number="26">ನಿನ್ನ ಪುರದ್ವಾರಗಳಲ್ಲಿ ದುಃಖ ಪ್ರಲಾಪ ತುಂಬಿರುವುದು. ನೀನು ನಗ್ನಳಂತೆ ನೆಲದ ಮೇಲೆ ಕುಳಿತುಬಿಡುವೆ.</verse>
			</chapter>
			<chapter number="4">
				<verse number="1">ಆ ಕಾಲ ಬಂದಾಗ ಏಳುಮಂದಿ ಅವಿವಾಹಿತ ಮಹಿಳೆಯರು ಒಬ್ಬ ಪುರುಷನನ್ನು ಹಿಡಿದುಕೊಂಡು: “ನಾವು ಸ್ವಂತವಾಗಿ ದುಡಿದು ಊಟಮಾಡುತ್ತೇವೆ, ಸ್ವಂತವಾಗಿ ಸಂಪಾದನೆಮಾಡಿ ಬಟ್ಟೆ ಉಡುತ್ತೇವೆ. ನೀನು ನಮ್ಮ ಯಜಮಾನನೆನಿಸಿಕೊಂಡು ನಮ್ಮ ಮಾನವನ್ನು ಕಾಪಾಡಿದರೆ ಸಾಕು,” ಎಂದು ಕೋರುವರು.</verse>
				<verse number="2">ಆ ದಿನದಂದು ಸರ್ವೇಶ್ವರಸ್ವಾಮಿ ಅನುಗ್ರಹಿಸುವ ಗಿಡಮರಗಳು ಸುಂದರವಾಗಿರುವುವು, ಸಮೃದ್ಧಿಯಾಗಿ ಬೆಳೆದಿರುವುವು. ಭೂಮಿಯ ಸಿರಿಸುಗ್ಗಿ ಅಳಿದುಳಿದ ಇಸ್ರಯೇಲರಿಗೆ ಹಿಗ್ಗನ್ನೂ ಹೆಮ್ಮೆಯನ್ನೂ ತರುವುದು.</verse>
				<verse number="3">ಸಿಯೋನಿನಲ್ಲಿ ಉಳಿದವರು, ಜೆರುಸಲೇಮಿನಲ್ಲಿ ಮಿಕ್ಕವರು - ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿರುವ ಜೆರುಸಲೇಮಿನ ನಿವಾಸಿಗಳೆಲ್ಲರು - ಪವಿತ್ರರೆನಿಸಿಕೊಳ್ಳುವರು.</verse>
				<verse number="4">ಆಗ ಒಡೆಯರಾದ ಸ್ವಾಮಿ ನ್ಯಾಯನಿರ್ಣಯ ಮಾಡುವ ತಮ್ಮ ಚೈತನ್ಯದಿಂದಲೂ ಸುಟ್ಟು ಶುಚಿಮಾಡುವ ಚೈತನ್ಯದಿಂದಲೂ ಸಿಯೋನಿನ ಮಹಿಳೆಯರ ಕಲ್ಮಶವನ್ನು ತೊಡೆದುಹಾಕುವರು.</verse>
				<verse number="5">ಸಿಯೋನ್ ಪರ್ವತದ ಮೇಲೆಲ್ಲ, ಅಲ್ಲಿನ ಸಭಾಕೂಟಗಳ ಮೇಲೆಲ್ಲ ಹಗಲಲ್ಲಿ ಧೂಮಮೇಘವನ್ನು, ರಾತ್ರಿಯಲ್ಲಿ ಪ್ರಜ್ವಲಿಸುವ ಅಗ್ನಿಪ್ರಕಾಶವನ್ನು ಉಂಟುಮಾಡುವರು. ದೇವರ ಮಹಿಮೆ ಛತ್ರಿಯಂತೆಯೂ ಚಪ್ಪರದಂತೆಯೂ ಎಲ್ಲರನ್ನು ಆವರಿಸುವುದು.</verse>
				<verse number="6">ಅದು ಹಗಲಿನ ಬಿಸಿಲಲ್ಲಿ ನೆರಳನ್ನೂ ಮಳೆಗಾಳಿ ಬಂದಾಗ ಆಶ್ರಯವನ್ನೂ ಕೊಡುವ ಮಂಟಪವಾಗಿರುವುದು.</verse>
			</chapter>
			<chapter number="5">
				<verse number="1">ಹಾಡುವೆ ನಾನೆನ್ನ ಪ್ರಿಯನಿಗೆ ಗೀತೆಯೊಂದನು ಅವನ ದ್ರಾಕ್ಷಾವನದ ಕುರಿತು ಪ್ರೇಮಗೀತೆಯನು: ಪ್ರಿಯತಮನಿಗೆ ಇತ್ತೊಂದು ದ್ರಾಕ್ಷಿಯ ತೋಟ ಫಲವತ್ತಾಗಿಹ ಗುಡ್ಡದ ಮೇಲಿನ ತೋಟ. ಆರಿಸಿ ಎಸೆದನು ಕಲ್ಲುಮುಳ್ಳುಗಳನು ಅಗೆದು ಹದಮಾಡಿದನಾತ ಗುಡ್ಡವನು.</verse>
				<verse number="2">ನೆಟ್ಟನು ಒಳ್ಳೊಳ್ಳೆ ದ್ರಾಕ್ಷಿಯ ಸಸಿಗಳನು ಕಟ್ಟಿದನು ಕಾವಲಿಗಾಗಿ ಅಟ್ಟಣೆಯೊಂದನು ಕಟ್ಟಿದನು ಅದರೊಳಗೆ ಆಲೆಯೊಂದನು. ನಿರೀಕ್ಷಿಸುತ್ತಿರೆ ಆತ ಸಿಹಿದ್ರಾಕ್ಷಿ ಹಣ್ಣನು, ಬಿಟ್ಟಿತದೋ ಅವನಿಗೆ ಹುಳಿ ಹಣ್ಣನು!</verse>
				<verse number="3">ಆದುದರಿಂದ ನನ್ನ ಪ್ರಿಯನು ಹೀಗೆಂದು ಕೇಳುತ್ತಾನೆ: “ಜೆರುಸಲೇಮಿನ ನಿವಾಸಿಗಳೇ, ಜುದೇಯದ ಜನರೇ, ನನಗೂ ನನ್ನ ತೋಟಕ್ಕೂ ಮಧ್ಯೆ ಇರುವ ವ್ಯಾಜ್ಯವನ್ನು ತೀರಿಸಿರಿ.</verse>
				<verse number="4">ನನ್ನ ತೋಟಕ್ಕಾಗಿ ನಾನು ಮಾಡಿದ್ದಕ್ಕಿಂತಲೂ ಇನ್ನೇನು ಮಾಡಬೇಕಾಗಿತ್ತು? ಅದು ಸಿಹಿದ್ರಾಕ್ಷಿಯನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತೇಕೆ? ನನ್ನ ಈ ತೋಟಕ್ಕೆ ಏನು ಮಾಡುವೆನೆಂದು ಹೇಳುತ್ತೇನೆ, ಕೇಳಿ:</verse>
				<verse number="5">ಕಿತ್ತೆಸೆಯುವೆನು ಅದರ ಬೇಲಿಯನು; ತುತ್ತಾಗುವುದದು ದನಕರುಗಳಿಗೆ. ಕೆಡವಿಹಾಕುವೆನು ಅದರ ಗೋಡೆಯನು; ಈಡಾಗುವುದದು ಪರರ ತುಳಿದಾಟಕ್ಕೆ.</verse>
				<verse number="6">ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.</verse>
				<verse number="7">ಇಸ್ರಯೇಲ್ ಮನೆತನವೇ ಸೇನಾಧೀಶ್ವರ ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ. ಜುದೇಯದ ಜನರೇ ಆತ ನಾಟಿಮಾಡಿದಾ ಸುಂದರ ಸಸಿತೋಟ. ನ್ಯಾಯನೀತಿಯನು ನಿರೀಕ್ಷಿಸಿದನಾತ ಆದರೆ ಸಿಕ್ಕಿತವನಿಗೆ ರಕ್ತಪಾತ! ಸತ್ಸಂಬಂಧವನು ಎದುರುನೋಡಿದನಾತ ಇಗೋ, ದಕ್ಕಿತವನಿಗೆ ದುಃಖಿತರ ಆರ್ತನಾದ!</verse>
				<verse number="8">ಮನೆಯ ಮೇಲೆ ಮನೆಯನ್ನು, ಹೊಲದ ಮೇಲೆ ಹೊಲವನ್ನು ಕೂಡಿಹಾಕಿಸುತ್ತಾ ಇರುವವರಿಗೆ ಧಿಕ್ಕಾರ! ಇತರರಿಗೆ ಕಿಂಚಿತ್ತನ್ನೂ ಬಿಡದೆ ನಾಡಿನ ನಡುವೆ ತಾವೇ ಗೌಡರಾಗಿ ವಾಸಿಸುವ ಇವರಿಗೆ ಧಿಕ್ಕಾರ!</verse>
				<verse number="9">ಸೇನಾಧೀಶ್ವರಸ್ವಾಮಿಯಿಂದ ನಾನು ಕಿವಿಯಾರೆ ಕೇಳಿದಂತೆ ಹಲವಾರು ಮಂದಿರಗಳು ಬರಿದಾಗುವುವು. ಸುಂದರ ಹಾಗೂ ಸವಿಸ್ತಾರವಾದ ಭವನಗಳು ನಿವಾಸಿಗಳಿಲ್ಲದೆ ಪಾಳುಬೀಳುವುವು.</verse>
				<verse number="10">ಹತ್ತು ಎಕರೆ ದ್ರಾಕ್ಷಿತೋಟ ಕೇವಲ ಎಂಟು ಲೀಟರ್ ದ್ರಾಕ್ಷಾರಸವನ್ನು ಕೊಡುವುದು. ನೂರೆಂಬತ್ತು ಲೀಟರ್ ಬೀಜಬಿತ್ತಿದರೆ, ಕೇವಲ ಹದಿನೆಂಟು ಲೀಟರ್ ಧಾನ್ಯ ಮಾತ್ರ ಸಿಗುವುದು.</verse>
				<verse number="11">ಮದ್ಯದ ಗೀಳಿನಿಂದ ಮುಂಜಾನೆ ಏಳುವವರಿಗೆ ಧಿಕ್ಕಾರ! ಅಮಲೇರಿ ಉನ್ಮತ್ತರಾಗುವಂತೆ ರಾತ್ರಿಯಲ್ಲಿ ಹೊತ್ತುಮೀರಿ ಕುಡಿಯುತ್ತಾ ಕಾಲಹರಣ ಮಾಡುವವರಿಗೆ ಧಿಕ್ಕಾರ!</verse>
				<verse number="12">ಕಿನ್ನರಿ, ವೀಣೆ, ತಬಲ, ಕೊಳಲು, ಮದ್ಯಪಾನ ಇವೇ ಅವರ ದುಂದೌತಣದ ಸೊಬಗು. ಸ್ವಾಮಿಯ ಕಾರ್ಯಗಳನ್ನು ಅವರು ಲಕ್ಷಿಸರು. ಸ್ವಾಮಿಯ ಕೃತಿಗಳನ್ನವರು ಧ್ಯಾನಿಸರು.</verse>
				<verse number="13">ಈ ಕಾರಣ, ನನ್ನ ಜನರು ಬುದ್ಧಿಹೀನರಂತೆ ಸೆರೆಹೋಗುವುದು ನಿಶ್ಚಯ. ಅವರ ಮುಖಂಡರು ಹಸಿವಿನಿಂದ ಸಾಯುವರು. ಅವರಲ್ಲಿ ಜನಸಾಮಾನ್ಯರು ಬಾಯಾರಿ ಸೊರಗಿಹೋಗುವರು.</verse>
				<verse number="14">ಪಾತಾಳವು ಹಸಿದು ಹಂಬಲಿಸುತ್ತಿದೆ. ಅಗಾಧವಾಗಿ, ಬಾಯಿ ತೆರೆದು ನಿಂತಿದೆ. ಜೆರುಸಲೇಮಿನ ಶ್ರೀಮಂತರು, ಸದ್ದುಗದ್ದಲ ಮಾಡುವ, ಹೆಮ್ಮೆಯಿಂದ ಹಿಗ್ಗುವ ಜನಸಾಮಾನ್ಯರು ಆ ಪಾತಾಳದೊಳಕ್ಕೆ ಬಿದ್ದುಹೋಗುವರು.</verse>
				<verse number="15">ನರಮಾನವರು ತಗ್ಗಿಹೋಗುವರು. ಕುಲೀನರು ಕುಗ್ಗಿಹೋಗುವರು. ಗರ್ವಿಷ್ಠರ ಸೊಕ್ಕು ಅಡಗಿಹೋಗುವುದು.</verse>
				<verse number="16">ಸೇನಾಧೀಶ್ವರ ಸ್ವಾಮಿಯಾದರೋ ನ್ಯಾಯತೀರಿಸುವುದರಲ್ಲಿ ಸರ್ವಶ್ರೇಷ್ಠರು. ಧರ್ಮಪಾಲನೆಯಲ್ಲಿ ಪರಮಪರಿಶುದ್ಧರು ಎಂದು ಕಾಣಿಸಿಕೊಳ್ಳುತ್ತಾರೆ.</verse>
				<verse number="17">ಪಟ್ಟಣ ಪ್ರದೇಶಗಳು ಹಾಳಾಗಿ ಮೇಕೆಮರಿಗಳಿಗೆ ಹುಲ್ಲುಗಾವಲುಗಳಾಗುವುವು. ಕುರಿಮರಿಗಳು ಅಲ್ಲಿ ಮೇಯುವುವು.</verse>
				<verse number="18">ಅಕ್ರಮವೆಂಬ ಹಗ್ಗಗಳಿಂದ ಅಪರಾಧ ಎಂಬ ತೇರನ್ನು ಎಳೆಯುವವರಿಗೆ ಧಿಕ್ಕಾರ!</verse>
				<verse number="19">“ಸ್ವಾಮಿ ತ್ವರೆಮಾಡಲಿ, ತನ್ನ ಕಾರ್ಯವನ್ನು ತುರ್ತಾಗಿ ನಡೆಸಲಿ, ನೋಡೋಣ; ಇಸ್ರಯೇಲಿನ ಪರಮ ಪಾವನ ಸ್ವಾಮಿಯ ಯೋಜನೆ ಶೀಘ್ರವಾಗಿ ಕೈಗೂಡಲಿ, ಆಗ ಪರಿಗ್ರಹಿಸೋಣ” ಎಂದು ಹೇಳುವ ಜನರಿಗೆ ಧಿಕ್ಕಾರ!</verse>
				<verse number="20">ಕೆಟ್ಟದ್ದನ್ನು ಒಳ್ಳೆಯದೆಂದೂ ಒಳ್ಳೆಯದನ್ನು ಕೆಟ್ಟದ್ದೆಂದೂ ಬೋಧನೆ ಮಾಡುವವರಿಗೆ ಧಿಕ್ಕಾರ! ಕತ್ತಲನ್ನು ಬೆಳಕೆಂದೂ ಬೆಳಕನ್ನು ಕತ್ತಲೆಂದೂ ಸಾಧಿಸುವಂಥವರಿಗೆ ಧಿಕ್ಕಾರ! ಕಹಿಯನ್ನು ಸಿಹಿಯೆಂದೂ ಸಿಹಿಯನ್ನು ಕಹಿಯೆಂದೂ ವಾದಿಸುವಂಥವರಿಗೆ ಧಿಕ್ಕಾರ!</verse>
				<verse number="21">ತಮ್ಮ ದೃಷ್ಟಿಯಲ್ಲಿ ತಾವೇ ಜ್ಞಾನಿಗಳೆಂದು ತಮ್ಮ ಗಣನೆಯಲ್ಲಿ ತಾವೇ ವಿವೇಕಿಗಳೆಂದು ಭಾವಿಸುವವರಿಗೆ ಧಿಕ್ಕಾರ!</verse>
				<verse number="22">ಸುರಾಪಾನದಲ್ಲಿ ಶೂರರಾಗಿ, ಮದ್ಯಮಿಶ್ರಣದಲ್ಲಿ ಸಾಹಸಿಗಳಾಗಿ ಇರುವವರಿಗೆ ಧಿಕ್ಕಾರ!</verse>
				<verse number="23">ಲಂಚಕ್ಕೋಸ್ಕರ ನಿರ್ದೋಷಿಗಳನ್ನು ಅಪರಾಧಿಗಳೆಂದು ತೀರ್ಮಾನಿಸಿ ವಂಚಿಸುವವರಿಗೆ ಧಿಕ್ಕಾರ!</verse>
				<verse number="24">ಹೀಗಿರಲು, ಒಣಗಿದ ಕಳೆಯನ್ನು ಅಗ್ನಿಜ್ವಾಲೆ ಕಬಳಿಸುವಂತೆ, ಒಣಹುಲ್ಲು ಬೆಂಕಿಯಲ್ಲಿ ಬೂದಿಯಾಗುವಂತೆ, ಅವರ ಬೇರು ಕೊಳೆತುಹೋಗುವುದು. ಅವರ ಹೂ ಧೂಳಿನಂತೆ ತೂರಿಹೋಗುವುದು. ಏಕೆಂದರೆ, ಅವರು ಸೇನಾಧೀಶ್ವರಸ್ವಾಮಿಯ ಉಪದೇಶವನ್ನು ನಿರಾಕರಿಸಿದ್ದಾರೆ. ಇಸ್ರಯೇಲಿನ ಪರಮಪಾವನ ಸ್ವಾಮಿಯ ವಾಕ್ಯವನ್ನು ಅಸಡ್ಡೆಮಾಡಿದ್ದಾರೆ.</verse>
				<verse number="25">ಎಂದೇ ತಮ್ಮ ಜನರ ವಿರುದ್ಧ ಸ್ವಾಮಿಯ ಕೋಪ ಭುಗಿಲೆದ್ದಿದೆ. ಹೊಡೆಯುವುದಕ್ಕೆ ಅವರ ಕೈ ಮೇಲಕ್ಕೆತ್ತಿದೆ. ಬೆಟ್ಟಗುಡ್ಡಗಳು ನಡುಗುವುವು. ಸತ್ತ ಹೆಣಗಳು ಕಸದಂತೆ ಬೀದಿಯಲ್ಲಿ ಬಿದ್ದಿರುವುವು. ಇಷ್ಟೆಲ್ಲ ನಡೆದರೂ ಸ್ವಾಮಿಯ ಕೋಪ ತಣಿಯದು, ಎತ್ತಿದ ಕೈ ಇಳಿಯದು.</verse>
				<verse number="26">ದೂರದ ಜನಾಂಗಕ್ಕೆ ಸ್ವಾಮಿ ಧ್ವಜಾರೋಹಣ ಮಾಡುವರು ಗುರುತಾಗಿ, ಕರೆಯುವರವರನು ಜಗದ ಕಟ್ಟಕಡೆಯಿಂದ ಸೀಟಿಹಾಕಿ; ಬರುವರಾಗ ಆ ಜನರು ತ್ವರೆಮಾಡಿ, ವೇಗವಾಗಿ.</verse>
				<verse number="27">ಬಳಲಿ ಹೋಗರು ಅವರಲ್ಲಿ ಯಾರೂ ಮುಗ್ಗರಿಸಿ, ನಿದ್ರಿಸರು ಯಾರೂ ತೂಕಡಿಸಿ, ಸಡಿಲವಾಗದವರ ನಡುಕಟ್ಟು, ಕಿತ್ತುಹೋಗದವರ ಕೆರದ ಕಟ್ಟು.</verse>
				<verse number="28">ಚೂಪಾಗಿವೆ ಅವರ ಬಾಣಗಳು; ಬಿಗಿದಿವೆ ಬಿಲ್ಲುಗಳು, ಬೆಣಚುಕಲ್ಲಿನಂತಿವೆ ಕುದುರೆಗಳ ಗೊರಸುಗಳು, ಸುತ್ತುತ್ತಿವೆ ಸುಂಟರಗಾಳಿಯಂತವರ ಚಕ್ರಗಳು.</verse>
				<verse number="29">ಗರ್ಜಿಸುತಿಹರು ಸೈನಿಕರು ಸಿಂಹದಂತೆ, ಆರ್ಭಟಿಸುತಿಹರವರು ಪ್ರಾಯದ ಸಿಂಹಗಳಂತೆ, ಗುರುಗುಟ್ಟುತಿಹರು ಬೇಟೆ ಹಿಡಿದ ಕೇಸರಿಯಂತೆ. ಅದನ್ನೆತ್ತಿಕೊಂಡು ಓಡುತಿಹರು, ಬಿಡಿಸುವರಾರೂ ಇಲ್ಲದಂತೆ.</verse>
				<verse number="30">ಗುರುಗುಟ್ಟುತಿಹರು ಯೆಹೂದ್ಯರ ಮೇಲೆ ಭೋರ್ಗರೆಯುವ ಸಮುದ್ರದಂತೆ; ನಾಡಿನೆಲ್ಲೆಡೆ ಕವಿದಿಹುದು ಗಾಡಾಂಧಕಾರ; ತಾಂಡವವಾಡುತಿಹುದು ನೋಡಿದೆಡೆ ದುಃಖದುಗುಡ; ಮೋಡ ಕವಿದು ಇರುಳಾಗಿಹುದು ಹಗಲೊಳು ಕೂಡ!</verse>
			</chapter>
			<chapter number="6">
				<verse number="1">ಅರಸ ಉಜ್ಜೀಯನು ಕಾಲವಾದ ವರ್ಷದಲ್ಲಿ ನನಗೆ ಸರ್ವೇಶ್ವರಸ್ವಾಮಿಯಿಂದ ದರ್ಶನವಾಯಿತು: ಉನ್ನತೋನ್ನತ ಸಿಂಹಾಸನದಲ್ಲಿ ಅವರು ಆಸೀನರಾಗಿದ್ದರು. ಅವರ ಮೇಲುವಸ್ತ್ರ ನೆರಿಗೆ ನೆರಿಗೆಯಾಗಿ ದೇವಾಲಯವನ್ನೆಲ್ಲ ಆವರಿಸಿತ್ತು.</verse>
				<verse number="2">ಅವರ ಸುತ್ತಲು ಸೆರಾಫಿಯರೆಂಬ ತೇಜಸ್ವಿಗಳು ಇದ್ದರು. ಪ್ರತಿಯೊಬ್ಬರಿಗೂ ಆರಾರು ರೆಕ್ಕೆಗಳಿದ್ದವು. ಎರಡು ರೆಕ್ಕೆಗಳಿಂದ ಅವರ ಮುಖ ಮುಚ್ಚಿತ್ತು. ಇನ್ನೆರಡು ರೆಕ್ಕೆಗಳಿಂದ ಅವರ ಪಾದಗಳು ಮುಚ್ಚಿದ್ದವು. ಮತ್ತೆರಡು ರೆಕ್ಕೆಗಳನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದರು.</verse>
				<verse number="3">ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ: “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು.</verse>
				<verse number="4">ಆ ಶಬ್ದಕ್ಕೆ ದೇವಾಲಯದ ಅಸ್ತಿವಾರವೇ ಕಂಪಿಸಿತು. ಧೂಮವು ಆಲಯವನ್ನೆಲ್ಲ ತುಂಬಿತು.</verse>
				<verse number="5">ಆಗ ನಾನು “ಅಯ್ಯೋ, ನನ್ನ ಗತಿಯೇನು? ನನ್ನ ಕಥೆ ಮುಗಿಯಿತು. ಅಶುದ್ಧ ವದನದವನು ನಾನು. ಅಶುದ್ಧ ವದನದವರ ಮಧ್ಯೆ ಬಾಳುವವನು. ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರ ಸರ್ವೇಶ್ವರನನ್ನು ಕಂಡೆವಲ್ಲಾ!” ಎಂದು ಕೂಗಿಕೊಂಡೆನು.</verse>
				<verse number="6">ಆಗ ಸೆರಾಫಿಯರಲ್ಲಿ - ತೇಜಸ್ವಿಯೊಬ್ಬನು ಬಲಿಪೀಠದಿಂದ, ಉರಿಯುವ ಕೆಂಡವೊಂದನ್ನು ಇಕ್ಕಳದಿಂದ ಹಿಡಿದುಕೊಂಡು ನನ್ನತ್ತ ಹಾರಿಬಂದನು.</verse>
				<verse number="7">ಆ ಉರಿಕೆಂಡವನ್ನು ನನ್ನ ಬಾಯಿಗೆ ಮುಟ್ಟಿಸಿ: “ಇದು ನಿನ್ನ ತುಟಿಗಳನ್ನು ತಾಕಿದೆ. ಈಗ ದೋಷ ನೀಗಿತು. ನಿನ್ನ ಪಾಪ ಪರಿಹಾರ ಆಯಿತು,” ಎಂದನು.</verse>
				<verse number="8">ಆಗ, “ಯಾರನ್ನು ಕಳುಹಿಸಲಿ? ನಮ್ಮ ಪರವಾಗಿ ಹೋಗುವವರು ಯಾರು?” ಎಂಬ ನುಡಿ ಕೇಳಿಸಿತು. ಅದಕ್ಕೆ ನಾನು, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿ” ಎಂದೆನು.</verse>
				<verse number="9">ಅದಕ್ಕೆ, “ನೀನು ಜನರ ಬಳಿಗೆ ಹೋಗಿ ಹೀಗೆಂದು ಹೇಳು: ‘ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು. ಕಣ್ಣಾರೆ ಕಂಡರೂ ಗ್ರಹಿಸಬಾರದು.’</verse>
				<verse number="10">ಅದೂ ಅಲ್ಲದೆ, ಆ ಜನರು: “ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ಗ್ರಹಿಸಿ, ನನಗೆ ಅಭಿಮುಖರಾಗಿ ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಅವರ ಹೃದಯವನ್ನು ಕೊಬ್ಬಿಸು, ಕಿವಿಗಳನ್ನು ಮಂದವಾಗಿಸು, ಕಣ್ಣುಗಳನ್ನು ಮಬ್ಬಾಗಿಸು,” ಎಂದು ನನಗೆ ಹೇಳಿದರು.</verse>
				<verse number="11">ಅದಕ್ಕೆ ನಾನು: “ಸ್ವಾಮಿ, ಈ ಪರಿಸ್ಥಿತಿ ಎಷ್ಟರ ತನಕ?” ಎಂದು ಕೇಳಿದೆನು. ಅದಕ್ಕೆ ಪ್ರತ್ಯುತ್ತರವಾಗಿ:</verse>
				<verse number="12">“ನಾನು ಜನರನ್ನು ದೂರ ತೊಲಗಿಸಿ, ನಾಡನ್ನು ನಾಶಗೊಳಿಸಿ, ನಗರಗಳನ್ನು ನಿರ್ಜನಗೊಳಿಸಿ, ಮನೆಗಳನ್ನು ಬರಿದಾಗಿಸಿ, ಧರೆಯನ್ನು ಪೂರ್ತಿಯಾಗಿ ನಾಶಗೊಳಿಸುವ ತನಕ ಪರಿಸ್ಥಿತಿ ಹೀಗಿರುವುದು.</verse>
				<verse number="13">“ನಾಡಿನ ಹತ್ತನೇ ಒಂದು ಭಾಗ ಉಳಿದಿದ್ದರೂ ಅದು ಕೂಡ ನಾಶವಾಗುವುದು. ಏಲಾ ಮರವನ್ನಾಗಲೀ ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ ಉಳಿಯುವುದು ಬುಡ ಮಾತ್ರ” ಎಂದರು. ಹೀಗೆ ಉಳಿದ ಬುಡವು ಮುಂದೆ ದೇವಜನರಾಗಿ ಚಿಗುರುವುದು.</verse>
			</chapter>
			<chapter number="7">
				<verse number="1">ಅದು ಆಹಾಜನ ಕಾಲ. ಇವನು ಯೋತಾಮನ ಮಗ, ಉಜ್ಜೀಯನ ಮೊಮ್ಮಗ, ಜುದೇಯದ ಅರಸ. ಇವನ ಕಾಲದಲ್ಲಿ ಸಿರಿಯದ ಅರಸ ರೆಚೀನ ಮತ್ತು ರೆಮೆಲ್ಯನ ಮಗನೂ ಇಸ್ರಯೇಲಿನ ಅರಸನೂ ಆದ ಪೆಕಹ ಎಂಬವರು ಜೆರುಸಲೇಮಿನ ಮೇಲೆ ದಂಡೆತ್ತಿಬಂದರು. ಆದರೆ ಅದನ್ನು ಜಯಿಸಲು ಅವರಿಂದಾಗಲಿಲ್ಲ.</verse>
				<verse number="2">ಸಿರಿಯರ ಸೈನಿಕರು ಈಗಾಗಲೇ ಇಸ್ರಯೇಲಿನ ಗಡಿಯೊಳಗಿದ್ದಾರೆ ಎಂಬ ಸುದ್ದಿ ಜುದೇಯದ ಅರಸನಿಗೆ ಮುಟ್ಟಿದ್ದೇ ತಡ, ಅವನೂ ಅವನ ಪ್ರಜೆಗಳೆಲ್ಲರೂ ಹೆದರಿದರು. ಬಿರುಗಾಳಿಗೆ ಸಿಕ್ಕಿದ ಗಿಡಮರಗಳಂತೆ ನಡುಗಿದರು.</verse>
				<verse number="3">ಆಗ ಸರ್ವೇಶ್ವರಸ್ವಾಮಿ ಯೆಶಾಯನಿಗೆ ಹೀಗೆಂದರು: “ನಿನ್ನ ಮಗ ಶೆಯಾರ್ ಯಾಶೂಬನನ್ನು ಕರೆದುಕೊಂಡು ಆಹಾಜಾರಸನನ್ನು ಕಾಣಲುಹೋಗು. ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದಲ್ಲಿ ಕೆರೆಯ ಕಾಲುವೆಯ ತುದಿಯ ಬಳಿ ಆತ ನಿನಗೆ ಸಿಕ್ಕುವನು. ಅವನಿಗೆ ಈ ಪ್ರಕಾರ ತಿಳಿಸು:</verse>
				<verse number="4">ಜೋಕೆ, ಸುಮ್ಮನಿರು, ಹೆದರಬೇಡ. ರೆಚೀನ, ಸಿರಿಯ ಮತ್ತು ಪೆಕಹ - ಇವರೆಲ್ಲರ ಕೋಪ ಎಷ್ಟು ಉಗ್ರವಾಗಿದ್ದರೂ ಅದು ಹೊಗೆಯಾಡುವ ಎರಡು ಮೋಟುಕೊಳ್ಳಿಗಳಿಗೆ ಸಮಾನ. ಆದ್ದರಿಂದ ಎದೆಗುಂದಬೇಡ.</verse>
				<verse number="5">ಸಿರಿಯ, ಇಸ್ರಯೇಲ್, ಅರಸನಾದ ಪೆಕಹನೊಂದಿಗೆ ಸೇರಿ ಒಳಸಂಚು ಮಾಡಿದ್ದಾರೆ.</verse>
				<verse number="6">‘ಜುದೇಯ ನಾಡಿಗೆ ಮುತ್ತಿಗೆ ಹಾಕಿ, ಅದನ್ನು ಬೆದರಿಸಿ ಆಕ್ರಮಿಸಿಕೊಳ್ಳೋಣ; ತೆಬೇಲನ ಮಗನಿಗೆ ಅಲ್ಲಿಯೇ ಪಟ್ಟಕಟ್ಟೋಣ’ ಎಂದು ದುರಾಲೋಚನೆ ಮಾಡಿಕೊಂಡಿದ್ದಾರೆ.</verse>
				<verse number="7">“ಆದರೆ ಸ್ವಾಮಿ ಸರ್ವೇಶ್ವರ ಆದ ನಾನು ನಿನಗೆ ಹೇಳುತ್ತೇನೆ: ಈ ಯೋಜನೆ ಕೈಗೂಡುವುದಿಲ್ಲ. ಈ ಒಳಸಂಚು ನೆರವೇರುವುದಿಲ್ಲ.</verse>
				<verse number="8">ಕಾರಣ, ರಾಜಧಾನಿಯಾದ ದಮಸ್ಕಸ್ಸಿಗಿಂತ ಸಿರಿಯ ಹೆಚ್ಚಲ್ಲ, ರಾಜನಾದ ರೆಚೀನನಿಗಿಂತ ದಮಸ್ಕಸ್‍ ಹೆಚ್ಚಲ್ಲ. ಇಸ್ರಯೇಲಿನ ಬಗ್ಗೆ ಹೇಳುವುದಾದರೆ, ಅದು ಅರವತ್ತೈದು ವರ್ಷದೊಳಗೆ ನುಚ್ಚುನೂರಾಗುವುದು, ಅಖಂಡ ರಾಷ್ಟ್ರವಾಗಿ ಉಳಿಯದು.</verse>
				<verse number="9">ಅಂತೆಯೇ, ರಾಜಧಾನಿಯಾದ ಸಮಾರ್ಯಕ್ಕಿಂತ ಇಸ್ರಯೇಲ್ ಹೆಚ್ಚಲ್ಲ. ರಾಜನಾದ ಪೆಕಹನಿಗಿಂತ ಸಮಾರ್ಯ ಹೆಚ್ಚಲ್ಲ. ನಿಮ್ಮ ವಿಶ್ವಾಸ ಸ್ಥಿರವಿಲ್ಲದಿದ್ದರೆ, ನಿಮಗೆ ಸ್ಥಿರತೆ ಇರುವುದಿಲ್ಲ.”</verse>
				<verse number="10">ಪುನಃ ಸರ್ವೇಶ್ವರಸ್ವಾಮಿ ಆಹಾಜನಿಗೆ ಹೇಳಿದ್ದೇನೆಂದರೆ:</verse>
				<verse number="11">“ನಿನ್ನ ದೇವರಾದ ಸರ್ವೇಶ್ವರನಿಂದ ಒಂದು ಗುರುತನ್ನು ಕೇಳಿಕೊ. ಅದು ಪಾತಾಳದಷ್ಟು ಆಳದಲ್ಲೇ ಇರಲಿ, ಆಕಾಶದಷ್ಟು ಎತ್ತರದಲ್ಲೇ ಇರಲಿ, ಕೇಳು.” ಎಂದರು.</verse>
				<verse number="12">ಅದಕ್ಕೆ ಆಹಾಜನು, “ಇಲ್ಲ, ನಾನು ಗುರುತನ್ನು ಕೇಳುವುದಿಲ್ಲ, ಸರ್ವೇಶ್ವರನನ್ನು ಪರೀಕ್ಷಿಸುವುದಿಲ್ಲ” ಎಂದನು.</verse>
				<verse number="13">ಆಗ ಯೆಶಾಯನು: “ದಾವೀದ ವಂಶಜರೇ, ಕೇಳಿರಿ, ಮಾನವರನ್ನು ಕೆಣಕಿದ್ದು ಸಾಲದೆಂದು ದೇವರನ್ನೇ ಕೆಣಕುತ್ತಿರುವಿರಾ?</verse>
				<verse number="14">ಆಗಲಿ, ಸರ್ವೇಶ್ವರ ನಿಮಗೊಂದು ಗುರುತನ್ನು ಕೊಡುವರು. ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು. ಇಮ್ಮಾನುವೇಲ್ ಎಂದು ಆತನಿಗೆ ಹೆಸರಿಡುವಳು.</verse>
				<verse number="15">ಆತನು ‘ಕೆಟ್ಟದ್ದು ಬೇಡ, ಒಳ್ಳೆಯದು ಬೇಕು’ ಎನ್ನುವಷ್ಟು ಬಲ್ಲವನಾಗುವಾಗ ಮೊಸರನ್ನೂ ಜೇನುತುಪ್ಪವನ್ನೂ ತಿನ್ನುವನು.</verse>
				<verse number="16">ಆ ಮಗು ‘ಕೆಟ್ಟದ್ದು ಬೇಡ, ಒಳ್ಳೆಯದು ಬೇಕು’ ಎನ್ನುವಷ್ಟು ಬಲ್ಲವನಾಗುವುದರೊಳಗೆ, ನೀನು ಯಾವ ಇಬ್ಬರು ಅರಸರುಗಳಿಗೆ ಹೆದರಿ ನಡುಗುತ್ತಿರುವಿಯೋ ಆ ಅರಸರುಗಳ ದೇಶ ನಿರ್ಜನವಾಗುವುದು.</verse>
				<verse number="17">ಸರ್ವೇಶ್ವರ ನಿನ್ನ ಮೇಲೂ ನಿನ್ನ ಪ್ರಜೆಯ ಮೇಲೂ ನಿನ್ನ ತಂದೆಯ ಮನೆತನದ ಮೇಲೂ ಭೀಕರ ದಿನಗಳನ್ನು ಬರಮಾಡುವರು. ಇಸ್ರಯೇಲ್ ರಾಜ್ಯ ಜುದೇಯ ನಾಡಿನಿಂದ ಬೇರ್ಪಟ್ಟ ದಿನ ಮೊದಲುಗೊಂಡು ಇದುವರೆಗೂ ಅಂಥ ದಿನಗಳು ಬಂದಿರಲಿಲ್ಲ. ಅಸ್ಸೀರಿಯದ ಅರಸನೇ ಆ ದುರ್ದಿನಗಳ ಪ್ರತೀಕ.</verse>
				<verse number="18">ಆ ದಿನ ಬಂದಾಗ ಈಜಿಪ್ಟಿನಿಂದ ನೊಣಗಳನ್ನೋ ಎಂಬಂತೆ, ಅಸ್ಸೀರಿಯ ನಾಡಿನಿಂದ ದುಂಬಿಗಳನ್ನೋ ಎಂಬಂತೆ, ಸ್ವಾಮಿ ಸಿಳ್ಳುಹಾಕಿ ಶತ್ರುಗಳನ್ನು ಬರಮಾಡುವರು.</verse>
				<verse number="19">ಅವರೆಲ್ಲ ಬಂದು ಕಡಿದಾದ ಕಣಿವೆಗಳಲ್ಲಿಯೂ ಬಂಡೆಗಳ ಸಂದುಗೊಂದುಗಳಲ್ಲಿಯೂ ಮುಳ್ಳುಪೊದೆಗಳಲ್ಲಿಯೂ ಗೋಮಾಳಗಳಲ್ಲಿಯೂ ಹುಳುಹುಪ್ಪಟೆಗಳಂತೆ ಮುತ್ತಿಕೊಳ್ಳುವರು.</verse>
				<verse number="20">ಆ ದಿನದಂದು ಯೂಫ್ರೆಟಿಸ್ ನದಿಯಾಚೆ ಇರುವ ಅಸ್ಸೀರಿಯದ ರಾಜನೆಂಬ ಹಜಾಮನ ಕತ್ತಿಯಿಂದ ಸರ್ವೇಶ್ವರ ನಿನ್ನ ತಲೆಯನ್ನೂ ಗಡ್ಡವನ್ನೂ ಕಾಲುಗೂದಲನ್ನೂ ಬೋಳಿಸುವರು.</verse>
				<verse number="21">ಅಂದು ಒಬ್ಬ ರೈತನು ಒಂದು ಕಡಸನ್ನು ಎರಡು ಮೇಕೆಗಳನ್ನು ಮಾತ್ರ ಉಳಿಸಿಕೊಳ್ಳಬಲ್ಲವನಾದರೂ ಬಾಯಿ ಮೊಸರಾಗುವಷ್ಟು ಅಧಿಕವಾದ ಹಾಲನ್ನು ಕರೆಯುವನು.</verse>
				<verse number="22">ಹೌದು, ನಾಡಿನಲ್ಲಿ ಅಳಿದುಳಿದವರೆಲ್ಲರು ಹಾಲು ಜೇನನ್ನೇ ಉಣ್ಣುವರು.</verse>
				<verse number="23">ಆ ದಿನದಂದು ಸಾವಿರ ಬೆಳ್ಳಿನಾಣ್ಯಗಳಷ್ಟು ಬೆಲೆಬಾಳುವ ಸಹಸ್ರ ದ್ರಾಕ್ಷಿಬಳ್ಳಿಗಳು ಬೆಳೆಯುವಂಥ ಪ್ರತಿಯೊಂದು ಪ್ರದೇಶದಲ್ಲೂ ಮುಳ್ಳುಪೊದೆಗಳು ಬೆಳೆದುಕೊಳ್ಳುವುವು.</verse>
				<verse number="24">ಅಲ್ಲಿ ಜನರು ಬಿಲ್ಲುಬಾಣಗಳನ್ನು ಹಿಡಿದು ಬೇಟೆಯಾಡುವರು. ನಾಡೆಲ್ಲ ಮುಳ್ಳುಪೊದೆಯಾಗಿ ಇರುವುದು.</verse>
				<verse number="25">ಸಾಗುವಳಿಯಾಗುತ್ತಿದ್ದ ಗುಡ್ಡಗಳಲ್ಲಿ ಯಾರೂ ಬರಲು ಅಂಜುವಷ್ಟು ಮುಳ್ಳುಕೊಂಪೆಗಳು ತುಂಬಿರುವುವು; ಅವು ದನಕರುಗಳು ಮೇದು ಕುರಿಮೇಕೆಗಳು ತುಳಿದಾಡುವ ಮಾಳಗಳಾಗುವುವು.”</verse>
			</chapter>
			<chapter number="8">
				<verse number="1">ಅನಂತರ ಸರ್ವೇಶ್ವರಸ್ವಾಮಿ ನನಗೆ ಹೀಗೆಂದರು: “ಬರೆಯುವ ದೊಡ್ಡ ಹಲಗೆ ಒಂದನ್ನು ತೆಗೆದುಕೊಂಡು ಸಾಧಾರಣ ಲಿಪಿಯಲ್ಲಿ, ಈ ಸೂಚ್ಯವಾದ ಪದಗಳನ್ನು ಬರೆ: ‘ಮಹೇರ್ ಶಾಲಾಲ್ ಹಾಷ್ ಬಜ್’ (ಅಂದರೆ ಸೂರೆಗೆ ಆತುರ; ಕೊಳ್ಳೆಗೆ ಅವಸರ).</verse>
				<verse number="2">ನೀನು ಹೀಗೆ ಬರೆದುದಕ್ಕೆ ಯಾಜಕನಾದ ಊರೀಯ, ಯೆಬೆರೆಕ್ಕನ ಮಗನಾದ ಜೆಕರ್ಯ - ಈ ನಂಬಿಗಸ್ತರನ್ನು ಸಾಕ್ಷಿಗಳಾಗಿ ಕರೆದುಕೊ” ಎಂದು ಹೇಳಿದರು.</verse>
				<verse number="3">ಸ್ವಲ್ಪಕಾಲವಾದ ನಂತರ ನಾನು ಪ್ರವಾದಿನಿಯನ್ನು ಕೂಡಲು ಆಕೆ ಗರ್ಭವತಿಯಾಗಿ ಗಂಡುಮಗುವನ್ನು ಹೆತ್ತಳು. ಆಗ ನನಗೆ: “ಆ ಮಗುವಿಗೆ ‘ಮಹೇರ್ ಶಾಲಾಲ್ ಹಾಷ್ ಬಜ್’ ಎಂದು ಹೆಸರಿಡು.</verse>
				<verse number="4">ಅವನು ‘ಅಪ್ಪಾ, ಅಮ್ಮಾ, ಎಂದು ಕೂಗಬಲ್ಲವನಾಗುವುದರೊಳಗೆ ಅಸ್ಸೀರಿಯದ ಅರಸನು ದಮಸ್ಕಸ್ಸಿನ ಆಸ್ತಿಪಾಸ್ತಿಯನ್ನೂ ಸಮಾರ್ಯದ ಸೂರೆಯನ್ನೂ ಹೊರಿಸಿಕೊಂಡು ಹೋಗುವನು,” ಎಂದು ಸರ್ವೇಶ್ವರಸ್ವಾಮಿ ಹೇಳಿದರು.</verse>
				<verse number="5">ಸರ್ವೇಶ್ವರ ಮತ್ತೊಮ್ಮೆ ನನಗೆ ಹೀಗೆಂದರು:</verse>
				<verse number="6">“ಈ ಜನರು ಸುಲಲಿತವಾಗಿ ಹರಿಯುವ ಸಿಲೋವದ ನೀರನ್ನು ಅಲ್ಲಗಳೆದು, ಅರಸನಾದ ರೆಚೀನ ಹಾಗೂ ಪೆಕಹ ಇವರುಗಳನ್ನು ನೆಚ್ಚಿಕೊಂಡು ನಲಿಯುತ್ತಿದ್ದಾರೆ.</verse>
				<verse number="7">ಆದುದರಿಂದ ಸ್ವಾಮಿಯಾದ ನಾನು ಅಸ್ಸೀರಿಯದ ಅರಸನನ್ನೂ ಅವನ ಚದುರಂಗ ಬಲವನ್ನೂ ಬರಮಾಡುವೆನು: ಅದು ಯೂಫ್ರಟಿಸ್ ಮಹಾನದಿಯ ಪ್ರವಾಹದಂತೆ ರಭಸವಾಗಿ ಹರಿದುಬರುವುದು.</verse>
				<verse number="8">ಹದ್ದುಮೀರಿ ಜುದೇಯದೆಲ್ಲೆಡೆ ನುಗ್ಗಿ ಹಳ್ಳಕೊಳ್ಳಗಳನ್ನು ತುಂಬುವುದು. ಕುತ್ತಿಗೆಯ ತನಕ ಉಕ್ಕಿಬಂದು ದಿಣ್ಣೆದಿಬ್ಬಗಳನ್ನು ಮುಳುಗಿಸುವುದು. ದೇವರು ನಮ್ಮೊಡನೆ (ಇಮ್ಮಾನುವೇಲ್) ಇರುವರು. ಅವರ ಬಿಚ್ಚುರೆಕ್ಕೆಗಳು ನಾಡಿನ ಉದ್ದಗಲವನ್ನೂ ಆವರಿಸುವುವು, ಇಡೀ ನಾಡಿಗೆ ಆಶ್ರಯ ನೀಡುವುವು.</verse>
				<verse number="9">ಕೂಡಿಬನ್ನಿ ರಾಷ್ಟ್ರಗಳೇ, ತುಂಡುತುಂಡಾಗುವಿರಿ ನೀವು; ಕಿವಿಗೊಡಿ, ದೂರ ದೇಶಗಳೇ, ನಡುಕಟ್ಟಿ ನಿಂತರೂ ತುಂಡುತುಂಡಾಗುವಿರಿ ನೀವು; ಹೌದು, ನಡುಕಟ್ಟಿ ನಿಂತರೂ ತುಂಡುತುಂಡಾಗುವಿರಿ ನೀವು.</verse>
				<verse number="10">ವ್ಯರ್ಥವಾಗುವುದು ನೀವು ಮಾಡಿದ ಸಮಾಲೋಚನೆ; ಕೈಗೂಡದು ನೀವು ಮಾಡಿದ ಪ್ರತಿಜ್ಞೆ; ಕಾರಣ, ದೇವನಿರುವನು ನಮ್ಮೊಡನೆ.”</verse>
				<verse number="11">ಜನರು ಅನುಸರಿಸುವ ಮಾರ್ಗದಲ್ಲಿ ನಾನು ನಡೆಯಬಾರದೆಂದು ಸರ್ವೇಶ್ವರ ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು ಎಚ್ಚರಿಕೆ ಇತ್ತರು:</verse>
				<verse number="12">“ಈ ಜನರು ಮಾಡುವ ಕುತಂತ್ರಕ್ಕೆ ಒಳಗಾಗಬೇಡ. ಅವರು ಯಾವುದಕ್ಕೆ ಭಯಪಡುತ್ತಾರೋ ಅದಕ್ಕೆ ನೀನು ಭಯಪಡಬೇಡ, ನಡುಗಲೂ ಬೇಡ.</verse>
				<verse number="13">ಸೇನಾಧೀಶ್ವರ ಸ್ವಾಮಿಯಾದ ನಾನು ಪವಿತ್ರನೆಂದು ಎಣಿಸಿ ನನಗೆ ಭಯಭಕ್ತಿಯಿಂದ ಸನ್ಮಾನಮಾಡು, ನನಗೆ ಹೆದರು.</verse>
				<verse number="14">ನಾನು ನಿನಗೆ ಪವಿತ್ರಾಲಯ ಆಗಿರುವೆನು. ಆದರೆ ಇಸ್ರಯೇಲಿನ ಎರಡು ಕುಲಗಳಿಗೆ ಎಡವುವ ಕಲ್ಲಾಗುವೆನು, ಮುಗ್ಗರಿಸುವ ಬಂಡೆಯಾಗುವೆನು. ಜೆರುಸಲೇಮಿನ ನಿವಾಸಿಗಳನ್ನು ಹಿಡಿಯುವ ಬಲೆಯೂ ಬೋನೂ ಆಗುವೆನು.</verse>
				<verse number="15">ಅನೇಕರು ಎಡವಿಬೀಳುವರು, ಮುಗ್ಗರಿಸಿ ಮೂಳೆ ಮುರಿದುಕೊಳ್ಳುವರು, ಬೋನಿಗೆ ಸಿಕ್ಕಿಕೊಳ್ಳುವರು, ಬಲೆಗೆ ಬೀಳುವರು.”</verse>
				<verse number="16">ದಿವ್ಯಬೋಧನೆಯನ್ನು ಸುಭದ್ರವಾಗಿ ಇರಿಸು. ಅದನ್ನು ನನ್ನ ಶಿಷ್ಯರಿಗೆ ಉಪದೇಶಮಾಡಿ ಸುರಕ್ಷಿತವಾಗಿರಿಸು.</verse>
				<verse number="17">ಯಕೋಬನ ಮನೆತನದವರಿಗೆ ತನ್ನ ಮುಖವನ್ನು ಮರೆಯಿಸಿಕೊಂಡು ಇರುವ ಸ್ವಾಮಿಗಾಗಿ ಕಾದಿರುವೆನು. ಸ್ವಾಮಿಯನ್ನೇ ಎದುರು ನೋಡುತ್ತಿರುವೆನು.</verse>
				<verse number="18">ಇಗೋ, ನನ್ನನ್ನೂ ನನಗೆ ಸ್ವಾಮಿ ದಯಪಾಲಿಸಿರುವ ಮಕ್ಕಳನ್ನೂ ನೋಡು. ಸಿಯೋನ್ ಶಿಖರದಲ್ಲಿ ವಾಸವಾಗಿರುವ ಸೇನಾಧೀಶ್ವರಸ್ವಾಮಿಯೇ ಇಸ್ರಯೇಲರಿಗೆ ನೀಡುವ ಸೂಚನೆಗಳು ಹಾಗೂ ಜೀವಂತ ಸಂಕೇತಗಳು ನಾವೇ ಆಗಿದ್ದೇವೆ.</verse>
				<verse number="19">‘ಲೊಚಗುಟ್ಟುವ, ಪಿಟಿಪಿಟಿಗುಟ್ಟುವ, ಕಣಿಹೇಳುವವರ ಮತ್ತು ಪ್ರೇತವಿಚಾರಕರ ಸಲಹೆ ಕೇಳಿ’ ಎಂದು ಜನರು ನಿಮಗೆ ಹೇಳಿಯಾರು. ಆಗ, ‘ದೇವರನ್ನೇ ಏಕೆ ವಿಚಾರಿಸಬಾರದು? ಜೀವಿತರಿಗಾಗಿ ಸತ್ತವರನ್ನು ವಿಚಾರಿಸುವುದು ಸರಿಯಲ್ಲ’ ಎಂದು ಅಂಥವರಿಗೆ ನೀವು ಹೇಳಬೇಕು.</verse>
				<verse number="20">‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.</verse>
				<verse number="21">ಜನರು ಘೋರ ಕಷ್ಟಗಳಿಗೆ ಒಳಗಾಗುವರು. ಹಸಿದು ದೇಶದಲ್ಲೆಲ್ಲ ಅಲೆದಾಡುವರು. ಹಸಿವಿನಿಂದ ರೋಷಗೊಂಡು ಅರಸನನ್ನೂ ದೇವರನ್ನೂ ಹಳಿಯುವರು.</verse>
				<verse number="22">ಆಕಾಶವನ್ನು ದಿಟ್ಟಿಸಿ ನೋಡಿದರೂ ಭೂಮಿಯನ್ನು ದುರುಗುಟ್ಟಿ ನೋಡಿದರೂ ಅವರಿಗೆ ಕಾಣುವುದು ಕಷ್ಟಸಂಕಟಗಳ ಕತ್ತಲೆ, ಭಯಂಕರವಾದ ಕಾಳಗತ್ತಲೆಯಲ್ಲದೆ ಮತ್ತೇನೂ ಅಲ್ಲ. ಅಂಥ ಕರಾಳ ಕತ್ತಲೆಯೊಳಗೆ ಅವರನ್ನು ದೂಡಲಾಗುವುದು.</verse>
			</chapter>
			<chapter number="9">
				<verse number="1">ಆದರೂ ಕಷ್ಟಸಂಕಷ್ಟಗಳನ್ನು ಅನುಭವಿಸಿದ ಆ ನಾಡಿಗೆ ಇನ್ನು ಮುಂದೆ ಕತ್ತಲಿರುವುದಿಲ್ಲ. ಒಮ್ಮೆ ಜೆಬುಲೋನ್ ಮತ್ತು ನಪ್ತಾಲಿಯ ಗೋತ್ರಗಳಿಗೆ ಬೀಡಾಗಿದ್ದ ಆ ಪ್ರಾಂತ್ಯವು ಅವಮಾನಕ್ಕೆ ಗುರಿಯಾಗಿತ್ತು. ಆದರೆ ಇನ್ನು ಮುಂದೆ ಅದಕ್ಕೆ ಘನತೆಗೌರವ ಬರುವುದು: ಸಮುದ್ರದ ಹಾದಿಯಿಂದ ಹಿಡಿದು ಜೋರ್ಡನಿನ ಆಚೆಯಲ್ಲಿ ಇರುವ ಪ್ರಾಂತ್ಯದವರೆಗೆ ಮಾತ್ರವಲ್ಲ, ಅನ್ಯಜನರು ಇರುವ ಗಲಿಲೇಯ ಪ್ರಾಂತ್ಯದವರೆಗೂ ಘನತೆಗೌರವ ಬಂದೊದಗುವುದು.</verse>
				<verse number="2">ಕಾಣಿಸಿತೊಂದು ಮಹಾಜ್ಯೋತಿ ಕತ್ತಲಲಿ ಸಂಚರಿಸುತ್ತಿದ್ದ ಜನರಿಗೆ ಪ್ರಜ್ವಲಿಸಿತಾ ಜ್ಯೋತಿ ಕಗ್ಗತ್ತಲಲಿ ಬಾಳುತ್ತಿದ್ದಾ ನಾಡಿಗರಿಗೆ.</verse>
				<verse number="3">ವೃದ್ಧಿಗೊಳಿಸಿರುವೆ ನೀನು ಆ ದೇಶವನು ಅಧಿಕರಿಸಿರುವೆ ಅದರ ತೋಷವನು ಸುಗ್ಗಿಕಾಲದಲಿ ಹಿಗ್ಗುವವರಂತೆ ಕೊಳ್ಳೆ ಹಂಚಿಕೊಳ್ಳುವವರಂತೆ ಹರ್ಷಿಸುವರವರು ನಿನ್ನ ಮುಂದೆ.</verse>
				<verse number="4">ಮುರಿದುಹಾಕಿದೆ ಭಾರವಾದ ಅವರ ನೊಗವನು ಅವರ ಬೆನ್ನನ್ನು ಬಡಿದ ಬೆತ್ತವನು ದಬ್ಬಾಳಿಕೆ ನಡೆಸಿದವರ ದೊಣ್ಣೆಯನು; ಮಿದ್ಯಾನನ್ನು ಗೆದ್ದ ದಿನದಂದು ಹಾಗೆಯೆ ಮಾಡಿದೆಯಲ್ಲವೆ ನೀನು?</verse>
				<verse number="5">ಅಗ್ನಿಕುಂಡಕ್ಕೆ ಆಹುತಿಯಾಗುವುವು ಯುದ್ಧಕ್ಕೆ ಬಂದ ಯೋಧರ ಪಾದರಕ್ಷೆಗಳು ರಕ್ತಸಿಕ್ತವಾದವರ ದೇಹದ ಕವಚಗಳು.</verse>
				<verse number="6">ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.</verse>
				<verse number="7">ಅಂತ್ಯವಿರದಾತನ ರಾಜ್ಯಾಭಿವೃದ್ಧಿಗೆ ಕೊನೆಯಿರದಾ ರಾಜ್ಯದ ಶಾಂತಿಗೆ. ಆಸೀನನಾಗುವನಾತ ದಾವೀದನ ಸಿಂಹಾಸನದ ಮೇಲೆ ಅಧಿಕಾರ ನಡೆಸುವನು ಆ ಸಾಮ್ರಾಜ್ಯದ ಮೇಲೆ. ಬಲಪಡಿಸುವನು ನ್ಯಾಯನೀತಿಯಿಂದದನು ಇಂದಿಗೂ ಎಂದೆಂದಿಗೂ ಸ್ಥಿರಪಡಿಸುವನದನು. ಸರ್ವಶಕ್ತಸ್ವಾಮಿಯ ಆಗ್ರಹವೆ ಸಾಧಿಸುವುದದನು.</verse>
				<verse number="8">ಯಕೋಬ ಕುಲದವರಿಗೆ‍ ಶಾಪದ ಸಂದೇಶ ಒಂದನ್ನು ಸರ್ವೇಶ್ವರ ಕಳುಹಿಸಿರುವರು. ಅದು ಇಸ್ರಯೇಲರ ಮೇಲೆ ಎರಗುವುದು.</verse>
				<verse number="9">“ಇಟ್ಟಿಗೆಗಳು ಬಿದ್ದುಹೋಗಿವೆ. ಕೆತ್ತನೆ ಕಲ್ಲುಗಳಿಂದ ಮರಳಿ ಕಟ್ಟುವೆವು. ಕಡಿದಿರುವರು ಅತ್ತಿಮರಗಳನ್ನು, ಅಲ್ಲೇ ನೆಡುವೆವು ದೇವದಾರು ವೃಕ್ಷಗಳನ್ನು,” ಎಂದು ಗರ್ವದಿಂದ ಕೊಚ್ಚಿಕೊಳ್ಳುವ</verse>
				<verse number="10">ಎಫ್ರಯಿಮ್ ಜನರಿಗೂ ಸಮಾರ್ಯದ ನಿವಾಸಿಗಳಿಗೂ ಅದು ಗೊತ್ತಾಗುವುದು.</verse>
				<verse number="11">ಸ್ವಾಮಿಯು ರೆಚೀನನ ಶತ್ರುಗಳನ್ನು ಅವರ ವಿರುದ್ಧವಾಗಿ ಎತ್ತಿಕಟ್ಟಿರುವರು. ಅವರ ಮುಂದೆ ಸೀರಿಯರನ್ನು, ಅವರ ಹಿಂದೆ ಫಿಲಿಷ್ಟಿಯರನ್ನು - ಹೀಗೆ ಎಲ್ಲಾ ಶತ್ರುಗಳನ್ನು ಎಬ್ಬಿಸಿರುವರು.</verse>
				<verse number="12">ಇವರು ಇಸ್ರಯೇಲರನ್ನು ನುಂಗಿಬಿಡಲು ಬಾಯಿ ತೆರೆದಿದ್ದಾರೆ. ಇಷ್ಟಾದರೂ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.</verse>
				<verse number="13">ಆದರೂ ತಮ್ಮನ್ನು ಶಿಕ್ಷಿಸಿದ ದೇವರಿಗೆ ಇಸ್ರಯೇಲರು ಅಭಿಮುಖರಾಗಲಿಲ್ಲ. ಸೇನಾಧೀಶ್ವರಸ್ವಾಮಿಯನ್ನು ಅರಸಲಿಲ್ಲ.</verse>
				<verse number="14">ಆದಕಾರಣ, ಇಸ್ರಯೇಲಿನ ತಲೆಬಾಲಗಳನ್ನೂ ತುದಿಬುಡವನ್ನೂ ಹುಲ್ಲಿನಂತೆ ಸ್ವಾಮಿ ಒಂದೇ ದಿನದಲ್ಲಿ ಕಡಿದುಬಿಡುವರು; ಅಂದರೆ ಸನ್ಮಾನ್ಯ ಹಿರಿಯರನ್ನು, ಸುಳ್ಳುಬೋಧನೆ ಮಾಡುವ ಪ್ರವಾದಿಗಳನ್ನು ಸಂಹರಿಸಿಬಿಡುವರು.</verse>
				<verse number="15"></verse>
				<verse number="16">ಈ ಜನರನ್ನು ನಡೆಸುವವರು ತಪ್ಪುದಾರಿಗೆ ಎಳೆಯುವಂಥವರು. ಅವರನ್ನು ಹಿಂಬಾಲಿಸುವವರೆಲ್ಲ ನಾಶವಾಗುವರು.</verse>
				<verse number="17">ಎಂದೇ ಅವರ ಯುವಕ ಯುವತಿಯರ ಬಗ್ಗೆ ಸ್ವಾಮಿಗೆ ಸಂತೋಷವಿಲ್ಲ; ಅವರ ಅನಾಥರ ಮತ್ತು ವಿಧವೆಯರ ಬಗ್ಗೆ ಸಹಾನುಭೂತಿಯಿಲ್ಲ. ಪ್ರತಿಯೊಬ್ಬನೂ ಧರ್ಮಭ್ರಷ್ಟನೂ ಅತಿ ದುಷ್ಟನೂ ಆಗಿದ್ದಾನೆ. ಪ್ರತಿಯೊಬ್ಬನ ಬಾಯಿ ನುಡಿಯುವುದು ಕೆಡುಕನ್ನೇ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.</verse>
				<verse number="18">ದುಷ್ಟತನ ಬೆಂಕಿಗೆ ಸಮಾನ. ಅದು ಮುಳ್ಳುಗಿಳ್ಳುಗಳನ್ನು ಸುಟ್ಟುಹಾಕುತ್ತದೆ. ಕಾಡುಪೊದೆಗಳನ್ನು ಭಸ್ಮಮಾಡುತ್ತದೆ. ಹೊಗೆಯಾಡುತ್ತಾ ಮುಗಿಲಂತೆ ಮೇಲೆ ಬೀಳುತ್ತದೆ.</verse>
				<verse number="19">ಸೇನಾಧೀಶ್ವರಸ್ವಾಮಿಯ ಕೋಪಾಗ್ನಿಯಿಂದ ನಾಡು ಸುಟ್ಟುಹೋಗಿದೆ. ಪ್ರಜೆಗಳು ಅಗ್ನಿಗೆ ಆಹುತಿಯಾಗಿದ್ದಾರೆ. ಅಣ್ಣನಿಗೆ ತಮ್ಮನ ಮೇಲೆ ದಯೆ ಇಲ್ಲದಾಗಿದೆ.</verse>
				<verse number="20">ಅತ್ತ ಕಿತ್ತುತಿಂದರೂ ಅವರಿಗೆ ತೃಪ್ತಿಯಿಲ್ಲ. ಇತ್ತ ಕುಡಿದು ಕಬಳಿಸಿದರೂ ಅವರ ಹಸಿವು ನೀಗುವುದಿಲ್ಲ. ಒಬ್ಬೊಬ್ಬನೂ ತನ್ನ ಕಂದನನ್ನೇ ಕೊಂದು ತಿನ್ನುತ್ತಾನೆ.</verse>
				<verse number="21">ಮನಸ್ಸೆ ಎಫ್ರಯಿಮನ್ನು ಎಫ್ರಯಿಮ್ ಮನಸ್ಸೆಯನ್ನು ಕಬಳಿಸುತ್ತದೆ. ಇವೆರಡೂ ಸೇರಿ ಜುದೇಯಕ್ಕೆ ವಿರುದ್ಧವಾಗಿ ಎದ್ದು ನಿಂತಿವೆ. ಇಷ್ಟಾದರೂ ಸಹ ಸ್ವಾಮಿಯ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.</verse>
			</chapter>
			<chapter number="10">
				<verse number="1">ಅನ್ಯಾಯವಾದ ನಿಬಂಧನೆಗಳನ್ನು ಕ್ರೂರವಾದ ಕಾನೂನುಗಳನ್ನು ರಚಿಸುವ ನಿಮಗೆ ಧಿಕ್ಕಾರ!</verse>
				<verse number="2">ನೀವು ದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತೀರಿ. ಬಡಬಗ್ಗರಿಂದ ಹಕ್ಕುಬಾಧ್ಯತೆಗಳನ್ನು ಕಸಿದುಕೊಳ್ಳುತ್ತೀರಿ. ವಿಧವೆಯರನ್ನು ಸೂರೆಮಾಡುತ್ತೀರಿ. ಅನಾಥರನ್ನು ಕೊಳ್ಳೆಹೊಡೆಯುತ್ತೀರಿ.</verse>
				<verse number="3">ದಂಡನೆಯ ದಿನದಂದು ಏನು ಮಾಡುವಿರಿ? ದೂರದಿಂದ ಬರುವ ವಿನಾಶದಿಂದ ಹೇಗೆ ಪಾರಾಗುವಿರಿ? ಸಹಾಯಕ್ಕಾಗಿ ಯಾರ ಬಳಿಗೆ ಓಡುವಿರಿ? ನಿಮ್ಮ ಆಸ್ತಿಪಾಸ್ತಿಯನ್ನು ಎಲ್ಲಿ ಅವಿತಿಡುವಿರಿ?</verse>
				<verse number="4">ಖೈದಿಗಳೊಂದಿಗೆ ಕಾರಾಗೃಹವನ್ನು ಸೇರುವಿರಿ; ಇಲ್ಲವೆ, ಇತರರ ಸಮೇತ ಹತರಾಗುವಿರಿ. ಇದೇ ನಿಮ್ಮ ಗತಿ. ಇಷ್ಟಾದರೂ ಸರ್ವೇಶ್ವರನ ಕೋಪ ತಣಿಯದು; ಹೊಡೆಯಲು ಎತ್ತಿದ ಕೈ ಇಳಿಯದು.</verse>
				<verse number="5">ಆಹಾ, ಅಸ್ಸೀರಿಯ ನಾಡೇ, ನೀನು ನನ್ನ ಕೋಪದ ದಂಡಾಯುಧ, ರೋಷದ ದೊಣ್ಣೆ.</verse>
				<verse number="6">ಆ ಧರ್ಮಭ್ರಷ್ಟ ಪ್ರಜೆಗೆ ಇದಿರಾಗಿ ಅಸ್ಸೀರಿಯವನ್ನು ಕಳುಹಿಸುತ್ತೇನೆ. ನನ್ನ ಕೋಪಕ್ಕೆ ಗುರಿಯಾದ ಜನರಿಗೆ ವಿರುದ್ಧ ಕಾರ್ಯವನ್ನು ಕೈಗೊಳ್ಳಲು ಆಜ್ಞೆ ಮಾಡುತ್ತೇನೆ. ನನ್ನ ಪ್ರಜೆಯನ್ನು ಸೂರೆಮಾಡಲು, ಕೊಳ್ಳೆಹೊಡೆಯಲು, ಬೀದಿಯ ಕಸದಂತೆ ತುಳಿದುಬಿಡಲು ಅದಕ್ಕೆ ಆಜ್ಞೆಮಾಡುತ್ತೇನೆ.</verse>
				<verse number="7">ಆದರೆ ಅಸ್ಸೀರಿಯದ ಆಲೋಚನೆಯೇ ಬೇರೆ. ಅನೇಕಾನೇಕ ಜನಾಂಗಗಳನ್ನು ತಾನೇ ಸಂಹರಿಸಿ ನಿರ್ಮೂಲಮಾಡಬೇಕೆಂಬ ಯೋಜನೆ ಅದರದು.</verse>
				<verse number="8">“ನನ್ನ ದಂಡನಾಯಕರೆಲ್ಲ ಅರಸರಲ್ಲವೇ?</verse>
				<verse number="9">ಕರ್ಕೆಮೀಷಿನ ಗತಿ ಕಲ್ನೋವಿಗೂ ಬಂತಲ್ಲವೇ? ಅರ್ಪದಿಗೆ ಬಂದ ಪಾಡು ಹಮಾತಿಗೂ ಬಂದಿತಷ್ಟೆ. ದಮಸ್ಕಸ್ಸಿನ ಅವಸ್ಥೆಯು ಸಮಾರ್ಯಕ್ಕೂ ಸಂಭವಿಸಿತು.</verse>
				<verse number="10">ಜೆರುಸಲೇಮ್ ಮತ್ತು ಸಮಾರ್ಯದ ವಿಗ್ರಹಗಳಿಗಿಂತ ಹೆಚ್ಚಿನ ಮೌಲ್ಯದ ಕೆತ್ತನೆಯ ಮೂರ್ತಿಗಳನ್ನು ಆರಾಧಿಸುವ ರಾಜ್ಯಗಳನ್ನು ನಾನು ಗೆದ್ದಿದ್ದೇನೆ.</verse>
				<verse number="11">ಸಮಾರ್ಯವನ್ನೂ ಅದರ ವಿಗ್ರಹಗಳನ್ನೂ ನಾಶಮಾಡಿದ ಪ್ರಕಾರ ಜೆರುಸಲೇಮನ್ನೂ ಅದರ ಮೂರ್ತಿಗಳನ್ನೂ ನಾಶಮಾಡುತ್ತೇನೆ” ಎಂದು ಅಸ್ಸೀರಿಯ ಕೊಚ್ಚಿಕೊಳ್ಳುತ್ತಿದೆ.</verse>
				<verse number="12">ಆದರೆ ಸರ್ವೇಶ್ವರನಾದ ನಾನು ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ನನ್ನ ಗುರಿಯನ್ನು ಸಾಧಿಸಿದ ಮೇಲೆ ಆ ಅಸ್ಸೀರಿಯದ ಅರಸನನ್ನು ಅವನ ದುರಹಂಕಾರಕ್ಕಾಗಿ, ಗರ್ವದ ಭಾವನೆಗಳಿಗಾಗಿ ಸರಿಯಾಗಿ ದಂಡಿಸುವೆನು.</verse>
				<verse number="13">ಅಸ್ಸೀರಿಯದ ಅನಿಸಿಕೆಯಿದು: “ನಾನು ವಿವೇಕಿ, ನನ್ನ ಭುಜಬಲದಿಂದಲೇ ಇದನ್ನು ಮಾಡಿದ್ದೇನೆ. ನನ್ನ ಜ್ಞಾನಶಕ್ತಿಯಿಂದಲೇ ಇದನ್ನು ಸಾಧಿಸಿದ್ದೇನೆ. ನಾಡುಗಳ ಮಧ್ಯೆಯಿರುವ ಎಲ್ಲೆಗಳನ್ನು ಕಿತ್ತುಹಾಕಿದ್ದೇನೆ. ಅವು ಕೂಡಿಸಿಟ್ಟುಕೊಂಡಿದ್ದ ನಿಕ್ಷೇಪಗಳನ್ನು ಸೂರೆಮಾಡಿದ್ದೇನೆ. ಗದ್ದುಗೆಯ ಮೇಲೆ ಕುಳಿತಿರುವವರನ್ನು ಮಹಾ ವೀರನಂತೆ ಕೆಡವಿಬಿಟ್ಟಿದ್ದೇನೆ.</verse>
				<verse number="14">(ಬೇಡನು)ಹಕ್ಕಿಯ ಗೂಡನ್ನು ಕಂಡುಹಿಡಿಯುವಂತೆ ಜನಾಂಗಗಳ ಆಸ್ತಿಪಾಸ್ತಿಯನ್ನು ಹಿಡಿದುಕೊಂಡಿದ್ದೇನೆ. ಹಕ್ಕಿ ಬಿಟ್ಟುಹೋದ ಮೊಟ್ಟೆಗಳನ್ನು ಒಟ್ಟುಗೂಡಿಸಿಟ್ಟುಕೊಳ್ಳುವಂತೆ ಸಮಸ್ತ ರಾಷ್ಟ್ರಗಳನ್ನು ಒಟ್ಟುಗೂಡಿಸಿದ್ದೇನೆ. ರೆಕ್ಕೆಯಾಡಿಸಿ ಬೆದರಿಸಲು ಯಾರೂ ಇರಲಿಲ್ಲ. ಕೊಕ್ಕು ತೆರೆದು ಕೀಚುಗುಟ್ಟಲು ಯಾರೂ ಕಾಣಲಿಲ್ಲ.”</verse>
				<verse number="15">ಕೊಡಲಿ, ಕಡಿಯುವವನನ್ನೇ ಕಡಿಯಲು ನಿಂತೀತೆ? ಗರಗಸ, ಆಡಿಸುವವನನ್ನೇ ಕತ್ತರಿಸಲು ಎದೆಗೊಂಡೀತೆ? ಕೋಲು, ಹಿಡಿದವನನ್ನೇ ಹೊಡೆದಂತಾಯಿತು! ನಿರ್ಜೀವ ದೊಣ್ಣೆ ಸಜೀವ ಮನುಷ್ಯನನ್ನೇ ಬಡಿದಂತಾಯಿತು!</verse>
				<verse number="16">ಆದಕಾರಣ, ಒಡೆಯರಾದ ಸೇನಾಧೀಶ್ವರ ಸರ್ವೇಶ್ವರ ಅಸ್ಸೀರಿಯಾದ ಕೊಬ್ಬಿದ ಯೋಧರಿಗೆ ಕ್ಷಯರೋಗವನ್ನು ಬರಮಾಡುವರು. ಅವರ ದೇಹಕ್ಕೆ ಬೆಂಕಿಯಂತೆ ಉರಿಯುವ ಜ್ವರವನ್ನು ಉಂಟುಮಾಡುವರು.</verse>
				<verse number="17">ಇಸ್ರಯೇಲಿನ ಪರಂಜ್ಯೋತಿಯಾದ ದೇವರು ಅಗ್ನಿಯಂತಾಗುವರು; ಇಸ್ರಯೇಲಿನ ಪರಮಪಾವನ ಸ್ವಾಮಿ ಜ್ವಾಲೆಯಂತಾಗುವರು; ಅದು ಒಂದೇ ಒಂದು ದಿನದಲ್ಲಿ ಅಸ್ಸೀರಿಯರ ಮುಳ್ಳುಪೊದರುಗಳನ್ನೂ ಬಿಡದೆ ಎಲ್ಲವನ್ನೂ ದಹಿಸಿಬಿಡುವುದು.</verse>
				<verse number="18">ದೇಹಾತ್ಮದಂಥ ಅದರ ಉದ್ಯಾನವನವನ್ನೂ ಫಲಭರಿತ ತೋಟವನ್ನೂ ನಿರ್ಮೂಲ ಮಾಡುವುದು. ಮಾರಕರೋಗ ತಗಲಿದ ರೋಗಿಯಂತೆ ದೇಶವೆಲ್ಲವೂ ಕರಗಿಹೋಗುವುದು.</verse>
				<verse number="19">ಅದರ ಅಳಿದುಳಿದ ಮರಗಳು ಒಂದು ಕೂಸು ಕೂಡ ಎಣಿಸಿ ಬರೆಯುವಷ್ಟು ಕಡಿಮೆಯಾಗುವುವು.</verse>
				<verse number="20">ಆ ದಿನದಂದು ಅಳಿದುಳಿದ ಇಸ್ರಯೇಲರು, ತಪ್ಪಿಸಿಕೊಂಡ ಯಕೋಬ ಮನೆತನದವರು ತಮ್ಮನ್ನು ಬಾಧಿಸಿದವರನ್ನು ನೆಮ್ಮುವುದಿಲ್ಲ. ಬದಲಿಗೆ ಇಸ್ರಯೇಲರ ಪರಮಪಾವನ ಸ್ವಾಮಿಯಾದ ಸರ್ವೇಶ್ವರನನ್ನೇ ನಿಶ್ಚಯವಾಗಿ ಆಶ್ರಯಿಸುವರು.</verse>
				<verse number="21">ಯಕೋಬ ಮನೆತನದವರಲ್ಲಿ ಅಳಿದುಳಿದ ಕೆಲವರು ಪರಾಕ್ರಮಿಯಾದ ದೇವರ ಕಡೆಗೆ ತಿರುಗಿಕೊಳ್ಳುವರು.</verse>
				<verse number="22">ಇಸ್ರಯೇಲೇ, ನಿನ್ನ ಜನರು ಸಮುದ್ರದ ಮರಳಿನಂತೆ ಅಸಂಖ್ಯಾತರಾಗಿ ಇದ್ದರೂ ಅವರಲ್ಲಿ ಕೆಲವರು ಮಾತ್ರ ಉಳಿದು ಹಿಂದಿರುಗುವರು. ಅವರ ಅಳಿವು ಶಾಸನಬದ್ಧವಾದುದು ಹಾಗೂ ಸಂಪೂರ್ಣವಾಗಿ ನ್ಯಾಯಸಮ್ಮತವಾದುದು.</verse>
				<verse number="23">ಹೌದು, ಪ್ರಭುವಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿ, ತಮ್ಮ ಆಜ್ಞೆಯ ಪ್ರಕಾರ ನಾಡಿನಲ್ಲೆಲ್ಲಾ ಪೂರ್ಣ ವಿನಾಶವನ್ನು ಬರಮಾಡುವರು.</verse>
				<verse number="24">ಹೀಗಿರಲು ಪ್ರಭುವಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿ ಹೇಳುವುದೇನೆಂದರೆ: “ಸಿಯೋನಿನಲ್ಲಿ ವಾಸಿಸುವ ನನ್ನ ಜನರೇ, ಈಜಿಪ್ಟಿನವರು ನಿಮಗೆ ಮಾಡಿದಂತೆ ಅಸ್ಸೀರಿಯದವರು ನಿಮ್ಮನ್ನು ಬಡಿಗೆಯಿಂದ ಹೊಡೆದು, ನಿಮಗೆ ವಿರುದ್ಧ ದೊಣ್ಣೆಯನ್ನು ಎತ್ತುವಾಗ ಅವರಿಗೆ ಹೆದರಬೇಡಿ;</verse>
				<verse number="25">ನಿಮ್ಮ ಮೇಲಿರುವ ನನ್ನ ಕೋಪ ಬಹುಬೇಗನೆ ಇಳಿದು, ಅವರ ಮೇಲೆ ತಿರುಗಿಕೊಳ್ಳುವುದು.</verse>
				<verse number="26">ಸೇನಾಧೀಶ್ವರ ಸರ್ವೇಶ್ವರಸ್ವಾಮಿಯಾದ ನಾನು, ಒಮ್ಮೆ ಓರೇಬನ ಬಂಡೆಯ ಬಳಿ ಮಿದ್ಯಾನರಿಗೆ ಮಾಡಿದಂತೆ, ಅಸ್ಸೀರಿಯದವರನ್ನು ಚಾಟಿಯಿಂದ ಥಳಿಸುವೆನು. ಕೆಂಪುಸಮುದ್ರದಲ್ಲಿ ಈಜಿಪ್ಟರನ್ನು ದಂಡಿಸಿದಂತೆ ಅಸ್ಸೀರಿಯದವರನ್ನು ದಂಡಿಸಲು ದೊಣ್ಣೆಯನ್ನೆತ್ತುವೆನು.</verse>
				<verse number="27">ಆ ದಿನ ಬಂದಾಗ ಅವರು ನಿಮ್ಮ ಮೇಲೆ ಹೊರಿಸಿರುವ ಗುಲಾಮಗಿರಿಯನ್ನು ಕಳಚಿಹಾಕಲಾಗುವುದು. ನಿಮ್ಮ ಕೊರಳಿಗೆ ಕಟ್ಟಿದ ದಾಸ್ಯದ ನೊಗವನ್ನು ಮುರಿದುಹಾಕಲಾಗುವುದು.”</verse>
				<verse number="28">ಶತ್ರುಸೇನೆ ಅಯ್ಯಾಥಿನ ಮೇಲೆ ಬಂದು ಇಳಿದಿದೆ. ಮಿಗ್ರೋನನ್ನು ಹಾದುಹೋಗಿದೆ; ಮಿಕ್ಮಾಷಿನಲ್ಲಿ ತನ್ನ ಸಾಮಗ್ರಿಗಳನ್ನು ಬಿಟ್ಟಿದೆ.</verse>
				<verse number="29">ಕಣಿವೆಯನ್ನು ದಾಟಿದೆ; ‘ಗೆಬಾದಲ್ಲಿ ದಂಡಿಳಿಸೋಣ’ ಎಂದು ಹೇಳುತ್ತಿದೆ. ರಾಮಾ ಜನತೆ ನಡುಗುತ್ತಿದೆ, ಸೌಲನ ಗಿಬೆಯದ ಜನ ಪಲಾಯನ ಗೈದಿದೆ.</verse>
				<verse number="30">ಗಲ್ಲೀಮ್ ಗ್ರಾಮಸ್ಥರೇ, ಕೂಗಿ ಕಿರಿಚಿಕೊಳ್ಳಿ. ಲಯೇಷದ ಜನರೇ, ಕಿವಿಗೊಡಿರಿ. ಅನಾತೋತಿನ ಜನರೇ, ಪ್ರತ್ಯುತ್ತರ ಕೊಡಿ.</verse>
				<verse number="31">ದಿಕ್ಕುಪಾಲಾಗಿಹರು ಮದ್ಮೇನಿನ ಜನರು; ವಲಸೆ ಹೋಗಿಹರು ಗೇಬೆಮಿನ ನಿವಾಸಿಗಳು.</verse>
				<verse number="32">ಅದೇ ದಿನ ಬೀಡುಬಿಡುವರು ಶತ್ರುಗಳು ನೋಬಿನಲ್ಲಿ; ಸಿಯೋನ್ ಬೆಟ್ಟದ ಕಡೆಗೆ, ಜೆರುಸಲೇಮಿನ ಗುಡ್ಡದ ಕಡೆಗೆ ಮುಷ್ಟಿ ತೋರಿಸುತ್ತಿಹರಿದೊ ಆ ದಿಕ್ಕಿಗೆ.</verse>
				<verse number="33">ಇಗೋ, ಪ್ರಭುವಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿ ಮರದ ಕೊಂಬೆಗಳನ್ನು ದುಡುಮ್ಮನೆ ಬೀಳಿಸುವರು. ಉನ್ನತವಾದ ವೃಕ್ಷಗಳನ್ನು ಕಡಿದುಹಾಕುವರು. ಎತ್ತರದ ಮರಗಳನ್ನು ನೆಲಕ್ಕೆ ಉರುಳಿಸುವರು.</verse>
				<verse number="34">ಕಾಡಿನ ಪೊದೆಗಳನ್ನು ಕೊಡಲಿಯಿಂದ ಕಡಿದುಬಿಡುವರು. ಲೆಬನೋನಿನ ಭವ್ಯ ಮರಗಳು ಬಿದ್ದುಹೋಗುವುವು.</verse>
			</chapter>
			<chapter number="11">
				<verse number="1">ಜೆಸ್ಸೆಯನ ಬುಡದಿಂದ ಒಡೆಯುವುದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು.</verse>
				<verse number="2">ನೆಲಸುವುದಾತನ ಮೇಲೆ ಜ್ಞಾನವಿವೇಕದಾಯಕ ಆತ್ಮ; ಶಕ್ತಿ ಸಮಾಲೋಚನೆಯನ್ನೀಯುವ ಆತ್ಮ; ಸರ್ವೇಶ್ವರನ ಅರಿವನು, ಭಯವನು ಹುಟ್ಟಿಸುವ ಆತ್ಮ ಅಹುದು, ನೆಲಸುವುದಾತನ ಮೇಲೆ ಸರ್ವೇಶ್ವರನ ಆತ್ಮ.</verse>
				<verse number="3">ಸರ್ವೇಶ್ವರನ ಭಯಭಕ್ತಿ ಅವಗೆ ಪರಿಮಳದಂತೆ. ತೀರ್ಪಿಡನಾತ ಕಣ್ಣಿಗೆ ತೋಚಿದಂತೆ ನಿರ್ಣಯಿಸನಾತ ಕಿವಿಗೆ ಬಿದ್ದಂತೆ.</verse>
				<verse number="4">ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.</verse>
				<verse number="5">ಸದ್ಧರ್ಮವೇ ಆತನಿಗೆ ನಡುಕಟ್ಟು ಪ್ರಾಮಾಣಿಕತೆಯೇ ಸೊಂಟಪಟ್ಟಿ.</verse>
				<verse number="6">ಬಾಳುವುವು ತೋಳಕುರಿಮರಿಗಳು ಒಂದಿಗೆ ಮಲಗುವುವು ಮೇಕೆಚಿರತೆಗಳು ಜೊತೆಗೆ ಮೊಲೆಯುಣ್ಣುವುವು ಕರುಕೇಸರಿಗಳು ಒಟ್ಟಿಗೆ ನಡೆಸುವುದವುಗಳನು ಚಿಕ್ಕಮಗು ಮೇಯಿಸುವುದಕೆ.</verse>
				<verse number="7">ಮೇಯುವುವು ಕರಡಿ, ಆಕಳುಗಳು ಒಟ್ಟಿಗೆ ಮಲಗುವುವು ಅವುಗಳ ಮರಿಗಳು ಜೊತೆಗೆ ಎತ್ತಿನ ಹುಲ್ಲು ಮೇವಾಗುವುದು ಸಿಂಹಕೆ.</verse>
				<verse number="8">ಆಡುವುದು ಮೊಲೆಗೂಸು ನಾಗರ ಹುತ್ತದ ಮೇಲೆ ಕೈಹಾಕುವುದು ಮೊಲೆಬಿಟ್ಟ ಮಗು ಹಾವಿನ ಬಿಲದ ಒಳಗೆ.</verse>
				<verse number="9">ಹಾನಿಯನು, ಕೇಡನು ಮಾಡರಾರೂ ನನ್ನ ಪರ್ವತದ ಮೇಲೆ. ಸಮುದ್ರದಂತೆ ತುಂಬಿರುವುದು ಸರ್ವೇಶ್ವರನ ಜ್ಞಾನ, ಧರೆಯ ಮೇಲೆ.</verse>
				<verse number="10">ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.</verse>
				<verse number="11">ಆ ದಿನದಂದು ಅಸ್ಸೀರಿಯ, ಈಜಿಪ್ಟ್, ಪತ್ರೋಸ್, ಸುಡಾನ್, ಏಲಾಮ್, ಬಾಬಿಲೋನಿಯ, ಹಮಾಥ್ ಹಾಗೂ ಸಮುದ್ರದ ಕರಾವಳಿ - ಈ ಸ್ಥಳಗಳಿಂದ ಸರ್ವೇಶ್ವರ ತಮ್ಮ ಅಳಿದುಳಿದ ಜನರನ್ನು ಬಿಡಿಸಿ ಬರಮಾಡಿಕೊಳ್ಳಲು ಮತ್ತೆ ಕೈನೀಡುವರು.</verse>
				<verse number="12">ಇಸ್ರಯೇಲರಲ್ಲಿ ಸೆರೆಹೋದವರನ್ನು, ಜುದೇಯದಿಂದ ಚದರಿಹೋದವರನ್ನು ಕರೆತರಲು, ಧರೆಯ ಚತುರ್ದಿಕ್ಕುಗಳಿಂದವರನ್ನು ಬರಮಾಡಲು, ರಾಷ್ಟ್ರಗಳಿಗೆ ಗುರುತಾಗಿ ಧ್ವಜವನ್ನು ಆತ ಏರಿಸುವನು.</verse>
				<verse number="13">ತೊಲಗುವುದು ಎಫ್ರಯಿಮಿನ ಹೊಟ್ಟೆಕಿಚ್ಚು, ನಿರ್ಮೂಲವಾಗುವುದು ಜುದೇಯದ ವೈರಿಗಳ ಒಳಸಂಚು. ಎಫ್ರಯಿಮ್, ಜುದೇಯವನ್ನು ಮತ್ಸರಿಸದು; ಜುದೇಯ, ಎಫ್ರಯಿಮನ್ನು ವಿರೋಧಿಸದು.</verse>
				<verse number="14">ಒಟ್ಟಿಗೆ ಎರಗುವರು ಫಿಲಿಷ್ಟಿಯರ ಮೇಲೆ ಪಶ್ಚಿಮದಲ್ಲಿ; ಜೊತೆಯಾಗಿ ಸೂರೆಮಾಡುವರು ಜನರನ್ನು ಪೂರ್ವದಲ್ಲಿ; ಗೆಲ್ಲುವರು ಎದೋಮ್ ಮೊವಾಬ್ ನಾಡುಗಳನ್ನು; ಅಧೀನವಾಗಿಸುವರು ಅಮೋನ್ಯ ಜನರನ್ನು.</verse>
				<verse number="15">ಆತ ಬತ್ತಿಸುವನು ಈಜಿಪ್ಟಿನ ಕೊಲ್ಲಿಯನ್ನು, ಒಣಗಿಸುವನು ಬಿಸಿಗಾಳಿಯಿಂದ ಯೂಫ್ರೆಟಿಸ್ ನದಿಯನ್ನು, ಸೀಳುವನದನ್ನು ಏಳು ತೊರೆಗಳನ್ನಾಗಿ. ಈ ಪರಿ ದಾಟುವರು ಜನರು ಕೆರ ಮೆಟ್ಟಿದವರಾಗಿ.</verse>
				<verse number="16">ಈಜಿಪ್ಟನ್ನು ಬಿಟ್ಟು ಬಂದ ಇಸ್ರಯೇಲರಿಗೆ ಮಾರ್ಗವೊಂದು ಸಿದ್ಧವಾಯಿತು ಅಂತೆಯೆ ಸಿದ್ಧವಾಗುವುದು ರಾಜಮಾರ್ಗವೊಂದು ಅಸ್ಸೀರಿಯದಲ್ಲಿ ಅಳಿದುಳಿದ ಜನರಿಗೆ.</verse>
			</chapter>
			<chapter number="12">
				<verse number="1">ಆ ದಿನದಂದು ಹಾಡುವುದು ಜನತೆ ಹೀಗೆಂದು: “ಹೇ ಸರ್ವೇಶ್ವರಾ, ನಿನಗೆನ್ನ ವಂದನ; ನಿನಗಿತ್ತು ಎನ್ನ ಮೇಲೆ ಕೋಪ ಮನ. ಆದರೆ ಅದೀಗ ಆಗಿದೆ ಶಮನ, ಬಂದಿತೆನ್ನ ಮನಕೆ ಸಾಂತ್ವನ.</verse>
				<verse number="2">ದೇವರೇ ಉದ್ಧಾರಕನೆನಗೆ ಆತನಲ್ಲಿದೆ ನನಗೆ ನಿರ್ಭೀತ ನಂಬಿಕೆ. ದೇವಾದಿದೇವನೇ ಎನಗೆ ಶಕ್ತಿ ಆತನೆನ್ನ ಕೀರ್ತನೆಯ ವ್ಯಕ್ತಿ ತಂದಿಹನಾತ ಎನಗೆ ಮುಕ್ತಿ.”</verse>
				<verse number="3">ಉದ್ಧರಿಸುವಾ ಒರತೆಗಳಿಂದ ಸೇದುವಿರಿ ನೀರನು ಹರುಷದಿಂದ.</verse>
				<verse number="4">ಹೇಳುವಿರಿ ನೀವು ಆ ದಿನದಂದು ಈ ಪರಿ - “ಸಲ್ಲಿಸಿರಿ ಸರ್ವೇಶ್ವರನಿಗೆ ಕೃತಜ್ಞತೆಯನು ಸ್ಮರಿಸಿರಿ ಆತನ ಶ್ರೀನಾಮವನು ಸಾರಿರಿ ಜನತೆಗೆ ಆತನ ಕಾರ್ಯಗಳನು ಘೋಷಿಸಿರಿ ಆತನ ನಾಮಘನತೆಯನು.</verse>
				<verse number="5">ಹಾಡಿರಿ ಸರ್ವೇಶ್ವರನಿಗೆ ಸ್ತುತಿಯನು ಎಸಗಿಹನಾತ ಮಹಿಮಾಕಾರ್ಯಗಳನು ತಿಳಿಸಿರಿ ಜಗದಾದ್ಯಂತಕೆ ಈ ವಿಷಯವನು.</verse>
				<verse number="6">ಸಿಯೋನಿನ ನಿವಾಸಿಗಳೇ, ಹಾಡಿರಿ, ಮಾಡಿರಿ ಭಜನ ನಿಮ್ಮ ಮಧ್ಯೆಯಿರುವ ಆ ಘನವಂತನ ಇಸ್ರಯೇಲಿನಾ ಸ್ವಾಮಿ ಪರಮಪಾವನ.”</verse>
			</chapter>
			<chapter number="13">
				<verse number="1">ಬಾಬಿಲೋನಿನ ವಿಷಯವಾಗಿ ಆಮೋಚನ ಮಗ ಯೆಶಾಯನಿಗೆ ಕೇಳಿಬಂದ ದೇವವಾಣಿ:</verse>
				<verse number="2">ಬೋಳುಬೆಟ್ಟದ ಮೇಲೆ ಧ್ವಜವನ್ನು ಏರಿಸಿರಿ. ಪ್ರಭುಗಳ ನಗರದ್ವಾರಗಳನ್ನು ಮುತ್ತುವಂತೆ ಸೈನಿಕರಿಗೆ ಸನ್ನೆಮಾಡಿ ಕೂಗಿ ಹೇಳಿರಿ.</verse>
				<verse number="3">ಆಯ್ಕೆಯಾದವರಿಗೆ ಅಪ್ಪಣೆಮಾಡಿದ್ದೇನೆ: ಹೌದು, ಹೆಮ್ಮೆಯಿಂದ ಮೆರೆಯುವ ಶೂರರು ನನ್ನ ಕೋಪವನ್ನು ತೀರಿಸಲಿ ಎಂದು ಅವರಿಗೆ ಕರೆನೀಡಿದ್ದೇನೆ.</verse>
				<verse number="4">ಇಗೋ, ಬೆಟ್ಟಗುಡ್ಡಗಳಿಂದ ಕೇಳಿಬರುತ್ತಿದೆ ಜನಜಂಗುಳಿಯಂಥ ಗದ್ದಲ; ಒಟ್ಟಿಗೆ ಕೂಡಿಕೊಂಡ ದೇಶವಿದೇಶಗಳ ಆರ್ಭಟ; ಸಜ್ಜಾಗಿ ನಿಂತಿದೆ ಸೇನಾಧೀಶ್ವರ ಸರ್ವೇಶ್ವರನ ಸೈನ್ಯ.</verse>
				<verse number="5">ಅವರು ಬಂದಿರುವುದು ಭೂಮಿಯ ಕಟ್ಟಕಡೆಯ ನಾಡುಗಳಿಂದ; ಇಡೀ ರಾಷ್ಟ್ರವನ್ನು ಹಾಳುಮಾಡಲಿರುವರು ಸರ್ವೇಶ್ವರ ಕೋಪೋದ್ರೇಕದಿಂದ.</verse>
				<verse number="6">ಪ್ರಲಾಪಿಸಿರಿ, ಸಮೀಪಿಸಿದೆ ಸರ್ವೇಶ್ವರನ ದಿನ; ಸನ್ನಿಹಿತವಾಗಿದೆ, ಸರ್ವನಾಶ ಮಾಡುವ ಸೇನಾಧೀಶ್ವರನ ದಿನ!</verse>
				<verse number="7">ಈ ಕಾರಣ ಜೋಲುಬೀಳುವುವು ಎಲ್ಲರ ಕೈಗಳು; ಕರಗಿ ನೀರಾಗುವುವು ಎಲ್ಲರ ಹೃದಯಗಳು.</verse>
				<verse number="8">ಭಯಭ್ರಾಂತರಾಗುವರು ಅವರೆಲ್ಲರು; ಆಕ್ರಮಿಸುವುವು ಅವರನ್ನು ಯಾತನೆ ವೇದನೆಗಳು. ಸಂಕಟಪಡುವರವರು ಹೆರುವ ಹೆಂಗಸಿನಂತೆ; ಒಬ್ಬರನ್ನೊಬ್ಬರು ನೋಡುವರು ದಿಗ್ಭ್ರಾಂತರಾದವರಂತೆ; ಅವರ ಮುಖಗಳು ಕೆಂಪೇರುವುವು ಬೆಂಕಿಯಂತೆ.</verse>
				<verse number="9">ಇಗೋ, ಸರ್ವೇಶ್ವರನ ದಿನ ಬರುತ್ತಿದೆ! ಭೂಮಿಯನ್ನು ಹಾಳುಮಾಡಲು, ಪಾಪಿಗಳನ್ನು ನಿರ್ಮೂಲಮಾಡಲು; ಕೋಪೋದ್ರೇಕದಿಂದ, ರೋಷಾವೇಶದಿಂದ, ಕ್ರೂರವಾಗಿ ಬರುತ್ತಿದೆ!</verse>
				<verse number="10">ಆಕಾಶದ ತಾರೆಗಳು, ನಕ್ಷತ್ರಗಳು ಬೆಳಗವು, ಸೂರ್ಯನು ಅಂಧಕಾರಮಯನಾಗುವನು, ಚಂದ್ರನು ಕಾಂತಿಹೀನನಾಗುವನು.</verse>
				<verse number="11">ಸರ್ವೇಶ್ವರ ಇಂತೆನ್ನುತ್ತಾರೆ: “ನಾನು ಲೋಕದವರಿಗೆ ಪಾಪದ ಫಲವನ್ನೂ ದುರುಳರಿಗೆ ದುಷ್ಕೃತ್ಯಗಳ ಫಸಲನ್ನೂ ತಿನ್ನಿಸುವೆನು. ಸೊಕ್ಕಿದವನ ಕೊಬ್ಬನ್ನು ಕರಗಿಸುವೆನು. ಬಲಾತ್ಕಾರ ಮಾಡುವವರ ಹೆಮ್ಮೆಯನ್ನು ಅಡಗಿಸುವೆನು.</verse>
				<verse number="12">ಅಳಿದುಳಿದ ಜನರು ಅಪರಂಜಿಗಿಂತಲೂ ಓಫೀರಿನ ಬಂಗಾರಕ್ಕಿಂತಲೂ ವಿರಳವಾಗಿರುವಂತೆ ಮಾಡುವೆನು.</verse>
				<verse number="13">ಸೇನಾಧೀಶ್ವರ ಸರ್ವೇಶ್ವರನು ಕೋಪೋದ್ರೇಕದಿಂದ ರೋಷಾವೇಶದಿಂದ ಕೆರಳುವ ದಿನದಂದು ಆಕಾಶಮಂಡಲ ನಡುಗುವುದು, ಭೂಮಂಡಲ ಸ್ಥಳಪಲ್ಲಟಗೊಳ್ಳುವುದು.</verse>
				<verse number="14">“ಬೇಟೆಗಾರನಿಂದ ತಪ್ಪಿಸಿಕೊಂಡು ಓಡುತ್ತಿರುವ ಜಿಂಕೆಯಂತೆಯೂ ಒಟ್ಟುಗೂಡಿಸಲು ಯಾರೂ ಇಲ್ಲದಂಥ ಕುರಿಗಳಂತೆಯೂ ಪ್ರತಿಯೊಬ್ಬನು ಸ್ವಜನರ ಕಡೆಗೆ ತಿರುಗುವನು; ಸ್ವದೇಶದ ಕಡೆಗೆ ಓಡುವನು.</verse>
				<verse number="15">ಸಿಕ್ಕಿಸಿಕ್ಕಿದವರೆಲ್ಲರು ಇರಿತಕ್ಕೆ ಗುರಿಯಾಗುವರು. ಅಟ್ಟಿಹಿಡಿಯಲಾದವರೆಲ್ಲರು ಕತ್ತಿಗೆ ತುತ್ತಾಗುವರು.</verse>
				<verse number="16">ಅವರ ಮಕ್ಕಳನ್ನು ಬಂಡೆಗೆ ಅಪ್ಪಳಿಸಲಾಗುವುದು. ಅವರ ಮನೆಗಳನ್ನು ಸೂರೆಮಾಡಲಾಗುವುದು. ಅವರ ಹೆಂಗಳೆಯರು ಅತ್ಯಾಚಾರಕ್ಕೆ ಈಡಾಗುವರು.</verse>
				<verse number="17">“ಇಗೋ, ಬಾಬಿಲೋನಿಯದ ಜನರಿಗೆ ವಿರುದ್ಧವಾಗಿ ಮೇದ್ಯರನ್ನು ಎತ್ತಿಕಟ್ಟುವೆನು. ಇವರು ಬೆಳ್ಳಿಬಂಗಾರಕ್ಕೆ ಮಾರುಹೋಗರು.</verse>
				<verse number="18">ಇವರ ಬಿಲ್ಲುಗಳು ಯುವಜನರನ್ನು ಚೂರುಚೂರು ಮಾಡುವುವು; ಇವರು ಕರುಳ ಕುಡಿಗಳನ್ನೂ ಕನಿಕರಿಸರು; ಮಕ್ಕಳುಮರಿಗಳನ್ನೂ ಕರುಣಿಸದು ಇವರ ಕಣ್ಣು.</verse>
				<verse number="19">ಬಾಬಿಲೋನ್ ರಾಜ್ಯಗಳಿಗೆ ಶಿರೋಮಣಿ, ಕಸ್ದೀಯರ ಭವ್ಯಭೂಷಣ. ಆದರೆ ದೇವರಾದ ನಾನು ಸೊದೋಮ್ ಮತ್ತು ಗೊಮೋರಾ ನಾಡುಗಳನ್ನು ನಾಶಮಾಡಿದಂತೆ ಇದನ್ನೂ ಕೆಡಿಸಿ ನಾಶಮಾಡುವೆನು.</verse>
				<verse number="20">ಅದು ಎಂದಿಗೂ ನಿವಾಸಕ್ಕೆ ಯೋಗ್ಯವಾಗದು. ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲು ಮಾಡರು. ಯಾವ ಅರಬ್ಬಿಯನೂ ಅಲ್ಲಿ ಗುಡಾರಹಾಕನು. ಕುರುಬರು ಅಲ್ಲಿ ಮಂದೆಗಳನ್ನು ತಂಗಿಸರು.</verse>
				<verse number="21">ಆ ನಾಡು ಕಾಡುಮೃಗಗಳಿಗೆ ಬೀಡಾಗುವುದು. ಅದರ ಮನೆಗಳು ಗೂಬೆಗಳ ಗೂಡಾಗುವುವು. ಉಷ್ಟ್ರಪಕ್ಷಿಗಳು ಅಲ್ಲಿ ವಾಸಮಾಡುವುವು. ಕಾಡುಮೇಕೆಗಳು ಕುಣಿದಾಡುವುವು.</verse>
				<verse number="22">ಅದರ ಅರಮನೆಗಳಲ್ಲಿ ನರಿಗಳು, ಮೋಜಿನ ಮಹಲುಗಳಲ್ಲಿ ತೋಳಗಳು ಕೂಗಾಡುವುವು. ಬಾಬಿಲೋನಿಗೆ ಕಾಲ ಬಂದಿದೆ. ಅದರ ದಿನಗಳು ಮುಗಿಯುತ್ತಿವೆ.</verse>
			</chapter>
			<chapter number="14">
				<verse number="1">ದಯೆತೋರಿಸುವರು ಸರ್ವೇಶ್ವರ ಯಕೋಬ್ಯರಿಗೆ, ಆರಿಸಿಕೊಳ್ಳುವರು ಮತ್ತೆ ಇಸ್ರಯೇಲರನ್ನೆ, ನೆಲೆಗೊಳಿಸುವರವರನ್ನು ತಾಯಿನಾಡಿನಲ್ಲೆ. ಹೊರನಾಡಿಗರು ಕೂಡಿಕೊಳ್ಳುವರು ಅವರೊಡನೆ, ಸೇರಿಕೊಳ್ಳುವರವರು ಯಕೋಬ ಮನೆತನಕ್ಕೆ.</verse>
				<verse number="2">ರಾಷ್ಟ್ರಗಳೇ ಇಸ್ರಯೇಲರನ್ನು ಕರೆತಂದು ಸೇರಿಸುವುವು ಸ್ವಂತ ನಾಡಿಗೆ ಸರ್ವೇಶ್ವರನ ಆ ನಾಡಿನಲಿ ದಾಸದಾಸಿಯರನ್ನಾಗಿಸಿಕೊಳ್ಳುವುದು ಇಸ್ರಯೇಲ್ ಮನೆತನವು ಆ ರಾಷ್ಟ್ರಗಳನ್ನೇ. ಸೆರೆಹಿಡಿಯುವರು ತಮ್ಮನ್ನು ಸೆರೆಹಿಡಿದವರನ್ನೇ ಅಧೀನಪಡಿಸುವರು ತಮ್ಮನ್ನು ಹಿಂಸಿಸಿದವರನ್ನೇ.</verse>
				<verse number="3">ಸಂಕಟದಿಂದಲೂ ನೋವುನಷ್ಟದಿಂದಲೂ ಕ್ರೂರವಾದ ಬಿಟ್ಟಿಜೀತದಿಂದಲೂ ಸರ್ವೇಶ್ವರ ನಿಮ್ಮನ್ನು ಬಿಡುಗಡೆಮಾಡುವರು. ಆ ದಿನದಂದು ಬಾಬಿಲೋನಿನ ಅರಸನನ್ನು ಮೂದಲಿಸಿ ಈ ಪದ್ಯವನ್ನು ನೀವು ಹಾಡಬೇಕು:</verse>
				<verse number="4">ಬಿದ್ದುಹೋದನಿದೊ ವಿಧ್ವಂಸಕ ಸದ್ದಿಲ್ಲದಾಗಿದೆ ಅವನ ಅಟ್ಟಹಾಸದ ಬಿಂಕ.</verse>
				<verse number="5">ಮುರಿದಿಹನು ಸರ್ವೇಶ್ವರ ದುರುಳರಾ ಗದೆಯನು ಮುರಿದಿಹನು ಅರಸರ ರಾಜದಂಡವನು.</verse>
				<verse number="6">ಏಕೆನೆ, ಎಡೆಬಿಡದೆ ದಂಡಿಸಿದರು ಪ್ರಜೆಗಳನು ಕೋಪೋದ್ರೇಕದಿಂದ ತಡೆಯಿಲ್ಲದೆ ದಬ್ಬಾಳಿಕೆ ನಡೆಸಿದರು ರಾಷ್ಟ್ರಗಳ ಮೇಲೆ ಸಿಟ್ಟಿನಿಂದ.</verse>
				<verse number="7">ಕಟ್ಟಕಡೆಗೆ ಶಾಂತಿಯಿಂದ ಸುರಕ್ಷಿತವಾಗಿದೆ ಜಗವೆಲ್ಲ ಹರ್ಷಧ್ವನಿಗೈಯುತ ಹಾಡುತಿಹರು ಜನರೆಲ್ಲ.</verse>
				<verse number="8">ನಲಿಯುತಿಹವು ತುರಾಯಿ, ಲೆಬನೋನಿನ ದೇವದಾರು ವೃಕ್ಷಗಳು ಕೂಡಾ, ‘ಮಡಿದು ಹೋದನಿವನು, ಇನ್ನು, ಕಡಿವವರಾರು ನಮ್ಮನು?’ ಎನ್ನುತಾ.</verse>
				<verse number="9">ನಿನ್ನ ಸ್ವಾಗತಿಸಲು ಸಡಗರದಿಂದಿದೆ ಪಾತಾಳಲೋಕವು, ಚೇತನಗೊಂಡಿವೆ ಲೋಕಮುಖಂಡರ ಪ್ರೇತಗಳು, ಎದ್ದು ನಿಂತಿಹರು ಸಕಲ ರಾಷ್ಟ್ರಗಳ ಅರಸರುಗಳು.</verse>
				<verse number="10">ಇವರೆಲ್ಲರು ಇಂತೆನ್ನುವರು ನಿನಗೆ: ‘ನೀನು ಸಹ ದುರ್ಬಲ ನಾದೆ ನಮ್ಮ ಹಾಗೆ ನೀನೂ ಸರಿಸಮಾನನಾದೆ ನಮಗೆ’.</verse>
				<verse number="11">ಇಳಿದಿದೆ ನಿನ್ನ ವೈಭವ, ವೀಣಾನಾದ ಪಾತಾಳಕೆ ನಿನಗೀಗ ಹುಳುಗಳೇ ಹಾಸಿಗೆ, ಕ್ರಿಮಿಗಳೇ ಹೊದಿಕೆ.</verse>
				<verse number="12">ಮುಂಜಾನೆಯ ನಕ್ಷತ್ರವೆ, ಉದಯ ಕುಮಾರನೆ, ಆಗಸದಿಂದ ಹೇಗೆ ಬಿದ್ದೆ? ರಾಷ್ಟ್ರಗಳನ್ನು ಗೆದ್ದ ನೀನು, ನೆಲಕ್ಕೆ ಅದು ಹೇಗೆ ಉರುಳಿದೆ?</verse>
				<verse number="13">‘ಹತ್ತಿಹೋಗುವೆನು ನಾನು ಆಕಾಶಮಂಡಲಕೆ ಉತ್ತರದಿಕ್ಕಿನ ಕೊನೆಗಿರುವ ಸುರಗಣ ಪರ್ವತಕ್ಕೆ ಎತ್ತುವೆ ಸಿಂಹಾಸನವನ್ನು ದೇವ ನಕ್ಷತ್ರಗಳ ಮೇಲಕೆ ‘ಕುಳಿತಲ್ಲಿ ರಾಜ್ಯವಾಳುವೆ’ ಎಂದುಕೊಂಡೆ ನಿನ್ನೊಳಗೆ.</verse>
				<verse number="14">‘ಏರುವೆ ಉನ್ನತ ಮೇಘಮಂಡಲದ ಮೇಲಕೆ, ಸರಿಸಮಾನನಾಗುವೆ ಉನ್ನತೋನ್ನತನಿಗೆ’.</verse>
				<verse number="15">ಇಂತೆಂದ ನೀನು ದೂಡಲಾಗಿರುವೆ ಪಾತಾಳಕೆ ಅಧೋಲೋಕದ ಅಗಾಧ ಕೂಪಗಳಿಗೆ.</verse>
				<verse number="16">ಸತ್ತವರು ದಿಟ್ಟಿಸಿ ನಿನ್ನನು: ‘ಭುವಿಯನು ನಡುಗಿಸಿದವನು, ರಾಜ್ಯಗಳನು ಕದಲಿಸಿದವನು,</verse>
				<verse number="17">ನಗರಗಳನು ಕೆಡವಿಸಿದವನು, ನಾಡನು ಕಾಡಾಗಿಸಿದವನು, ಖೈದಿಗಳನು ಬಂಧನದಿಂದ ಬಿಡಿಸಿದವನು ಈತನೇ ಅಲ್ಲವೆ?’ ಎಂದಾಡಿಕೊಳ್ವರು.</verse>
				<verse number="18">ಸಂಭ್ರಮದಿ ಸ್ವಂತ ಸಮಾಧಿಗಳಲಿ ನಿರಂತರ ನಿದ್ರಿಸುತಿಹರು ಸಕಲ ರಾಷ್ಟ್ರಗಳ ಅರಸರು, ಸಮಸ್ತ ರಾಜರು.</verse>
				<verse number="19">ನಿನ್ನನ್ನಾದರೊ ಕೊಳೆತ ಕಡ್ಡಿಯಂತೆ ಬಿಸಾಡಿಹರು ಕೆಳಕೆ ಗೋರಿಯಿಲ್ಲದ ನಿನ್ನ ಶವ ಈಡಾಗಿದೆ ಪರರ ತುಳಿತಕ್ಕೆ, ಕತ್ತಿ ತಿವಿದ, ಕಲ್ಲುಗುಂಡಿಗೆ ಪಾಲಾದ ಹೆಣಗಳೇ ನಿನ್ನ ಹೊದಿಕೆ.</verse>
				<verse number="20">ಸ್ವಂತ ಜನರನೇ ಕೊಂದ ನಿನಗೆ ಸ್ವಂತ ನಾಡನೇ ನಾಶಗೈದ ನಿನಗೆ ಸಿಗದು ರಾಜ್ಯವೈಭವದ ಸಂಸ್ಕಾರ ಗೋರಿಗೆ, ‘ಹೇಳಹೆಸರಿಲ್ಲದ ಗತಿ ದುರುಳರ ಸಂತಾನಕೆ’.</verse>
				<verse number="21">ತಲೆಯೆತ್ತಿ ಪೃಥ್ವಿಯನೇ ವಶಪಡಿಸಿಕೊಳ್ಳದಂತೆ, ಧರೆಯ ಮೇಲೆಲ್ಲ ನಗರಗಳನ್ನು ಕಟ್ಟಿಕೊಳ್ಳದಂತೆ, ಸಿದ್ಧಮಾಡಿರಿವನ ಮಕ್ಕಳಿಗೆ ವಧ್ಯಸ್ಥಾನ, ಈತನ ಪಿತಾಪಿತೃಗಳ ಪಾಪಕೃತ್ಯಗಳ ಕಾರಣ.</verse>
				<verse number="22">ಸೇನಾಧಿಶ್ವರ ಸರ್ವೇಶ್ವರ ಸ್ವಾಮಿಯ ನುಡಿಗಳು: “ನಾನವರಿಗೆ ವಿರುದ್ಧವಾಗಿ ಎದ್ದು ನಿರ್ನಾಮಮಾಡುವೆನು, ಬಾಬಿಲೋನಿನ ಹೆಸರನು, ಜನಶೇಷವನು, ಪುತ್ರಪೌತ್ರರನು.</verse>
				<verse number="23">ಪರಿವರ್ತಿಸುವೆನಾ ನಾಡನು ಜವುಗು ನೆಲವನ್ನಾಗಿ, ಅಹುದು, ಮುಳ್ಳುಹಂದಿಗಳ ರೊಪ್ಪವನ್ನಾಗಿ, ಗುಡಿಸಿಬಿಡುವೆನು ನಾಶವೆಂಬ ಪೊರಕೆಯಿಂದ ಪೂರ್ತಿಯಾಗಿ\.</verse>
				<verse number="24">	 ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಪ್ರತಿಜ್ಞೆಯಿದು: “ನೆರವೇರಿಯೇ ತೀರುವುದು ನಾ ಸಂಕಲ್ಪಿಸಿದ್ದು, ಈಡೇರಿಯೇ ತೀರುವುದು ನಾ ಯೋಚಿಸಿದ್ದು.</verse>
				<verse number="25">ನಶಿಸಿಬಿಡುವೆನಾ ಅಸ್ಸೀರಿಯರನು ನನ್ನ ನಾಡಿನಲಿ, ತುಳಿದುಬಿಡುವೆನು ಅವರನು ನನ್ನ ಬೆಟ್ಟಗಳಲಿ, ನೀಗುವುದಾಗ ನನ್ನ ಜನರಿಂದ ಅವರು ಹೂಡಿದ ನೊಗವು, ತೊಲಗುವುದಾಗ ಅವರು ಹೊರಿಸಿದ ಹೊರೆಯು.</verse>
				<verse number="26">ವಿಶ್ವದ ಬಗ್ಗೆ ನಾ ಮಾಡಿರುವ ಯೋಜನೆಯಿದು, ರಾಷ್ಟ್ರಗಳನ್ನು ದಂಡಿಸಲೆತ್ತಿರುವ ಕೈಯಿದು\.</verse>
				<verse number="27">ವ್ಯರ್ಥಗೊಳಿಸುವವರಾರು ಸೇನಾಧಿಶ್ವರ ಸರ್ವೇಶ್ವರ ಸ್ವಾಮಿಯ ಯೋಜನೆಯನು? ಹಿಂತೆಗೆವವರಾರು ಅವರೆತ್ತಿದ ಕೈಯನು?.</verse>
				<verse number="28">ಅರಸ ಆಹಾಜನು ಕಾಲವಾದ ವರುಷದಲಿ ಕೇಳಿಬಂದಿತು ಈ ದೈವೋಕ್ತಿ:</verse>
				<verse number="29">“ನಲಿಯದಿರಿ, ಎಲೈ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಕೋಲು ಮುರಿಯಿತೆಂದು. ಹಾವು ಸತ್ತರೂ ಅದರ ಮೂಲದಿಂದ ಹುಟ್ಟುವುದು ಕ್ರೂರ ಕಾಳಿಂಗವು, ಅದರ ಮೊಟ್ಟೆಯಿಂದ ಹೊರಬರುವುದು ಹಾರುವ ಘಟಸರ್ಪವು.</verse>
				<verse number="30">ಪೋಷಣೆ ಪಡೆಯುವರು ದೀನದಲಿತರು, ನಿರ್ಭಯದಿಂದ ನಿದ್ರಿಸುವರು ದಿಕ್ಕಿಲ್ಲದವರು. ನಿನ್ನ ಸಂತಾನದವರಾದರೋ ಸಾಯುವರು ಕ್ಷಾಮದಿಂದ, ಅಳಿದುಳಿದವರು ಹತರಾಗುವರು ಆ ಘಟಸರ್ಪದಿಂದ.</verse>
				<verse number="31">ಪುರದ್ವಾರವೇ, ಗೋಳಾಡು; ಪಟ್ಟಣವೇ, ಬೊಬ್ಬೆಯಿಡು, ಫಿಲಿಷ್ಟಿಯವೇ, ಕರಗಿಹೋಗು, ಉತ್ತರದಿಂದ ಬರುತ್ತಿದೆ ಧೂಮಧೂಳಿ ಆ ದಂಡಿನಲ್ಲಿಲ್ಲ ನೋಡು, ಯಾವ ಹೇಡಿ.</verse>
				<verse number="32">ಹೊರನಾಡಿನ ರಾಯಭಾರಿಗಳಿಗೆ ನಮ್ಮ ಉತ್ತರವೇನು? “ಸರ್ವೇಶ್ವರ ಸ್ವಾಮಿ ಸ್ಥಾಪಿಸಿಹರು ಸಿಯೋನನ್ನು, ದೀನದಲಿತರು ಆಶ್ರಯಿಸಿಕೊಳ್ಳುವರು ಅದನ್ನು.”</verse>
			</chapter>
			<chapter number="15">
				<verse number="1">ಮೋವಾಬನ್ನು ಕುರಿತ ದೈವೋಕ್ತಿ ಇದು: “ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಆರ್ ಪಟ್ಟಣವು. ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಕೀರ್ ಪಟ್ಟಣವು.</verse>
				<verse number="2">ಹತ್ತಿಹರು ಗುಡಿಗೋಪುರಗಳನು ಆಳುವುದಕ್ಕಾಗಿ, ದೀಬೋನಿನವರು, ಗೋಳಾಡುತಿಹರು ನೆಬೋವಿನಲಿ ಮೇಣ್ ಮೇದೆಬದಲಿ, ಮೋವಾಬ್ಯರು ತಲೆ ಬೋಳಿಸಿಹರು, ಗಡ್ಡ ಕತ್ತರಿಸಿಹರು ದುಃಖದಿಂದ ಎಲ್ಲರು.</verse>
				<verse number="3">ಗೋಣಿತಟ್ಟನುಟ್ಟು ತಿರುಗುತಿಹರು ಹಾದಿಬೀದಿಗಳಲಿ, ಕಣ್ಣೀರಿಡುತ ಸೊರಗಿಹರು ಮಳಿಗೆಗಳಲಿ, ಬೀದಿ ಚೌಕಗಳಲಿ.</verse>
				<verse number="4">ಕೂಗಿಕೊಳ್ಳುತಿಹವು ಹೆಷ್ಬೋನ್ ಎಲೆಯಾಲೆಗಳು, ಕೇಳಿಬರುತಿಹುದು ಯಹಚಿನವರೆಗೂ ಅವುಗಳ ರೋದನವು, ಕಿರಿಚಿಕೊಳ್ಳುತಿಹರು ಮೋವಾಬಿನ ಸೇನೆಯಾಳುಗಳು, ತತ್ತರಿಸಿ ಹೋಗಿಹವು ಅವರ ಗುಂಡಿಗೆಗಳು.</verse>
				<verse number="5">ಮೊರೆಯಿಡುತ್ತಿದೆ ಎನ್ನ ಮನ ಮೋವಾಬಿನ ನಿಮಿತ್ತ, ಪಲಾಯನ ಗೈದವರು ಓಡುತಿಹರು ಚೋಯರತ್ತ, ಎಗ್ಲತ್ ಶೆಲಿಶೀಯ ದತ್ತ, ಹತ್ತಿಹರು ಲೂಹೀತ್ ದಿಣ್ಣೆಯನ್ನು ಅಳುತ್ತ, ಪಿಡಿದಿಹರು ಹೊರೋನಯಿಮಿನ ದಾರಿಯನು ಹಾಳಾದೆವೆಂದು ಧ್ವನಿಗೈಯುತ.</verse>
				<verse number="6">ಬತ್ತಿಹೋಯಿತು ನಿಮ್ರೀಮ್ ನದಿಯು, ಬಾಡಿಹೋಯಿತು ಹಸಿಹುಲ್ಲು, ಮುಗಿಯಿತು ಮೇವು, ಇಲ್ಲವಾಯಿತು ಪಚ್ಚೆಪಸಿರಾವುದು.</verse>
				<verse number="7">ಎಂತಲೇ ವಿಲ್ಲೊ ಕಣಿವೆಯಾಚೆ ಹೊತ್ತು ಹೋಗುತಿಹರು, ತಾವು ಗಳಿಸಿದ ಆಸ್ತಿಯನ್ನು, ಕೂಡಿಸಿಟ್ಟ ಸ್ವತ್ತನ್ನು.</verse>
				<verse number="8">ಹಬ್ಬಿದೆ ಅದರ ಪ್ರಲಾಪ ಮೋವಾಬಿನ ಎಲ್ಲೆಗಳ ಪರಿಯಂತ, ವ್ಯಾಪಿಸಿದೆ ಅದರ ಆಕ್ರಂದ ಎಗ್ಲಯಿಮಿನ್, ಬೆಯೆರ್ ಏಲೀಮಿನ ತನಕ.</verse>
				<verse number="9">ಹರಿಯುತಿದೆ ದೀಮೋನಿನ ನದಿ ರಕ್ತಮಯವಾಗಿ, ಕಾದಿದೆ ದೀಮೋನರಿಗೆ ಇನ್ನೂ ಹೆಚ್ಚಿನ ಹಾನಿ, ಎರಗಲಿದೆ ಅಳಿದುಳಿದ ಮೋವಾಬ್ಯರ ಮೇಲೆ ಒಂದು ಕೇಸರಿ.”</verse>
			</chapter>
			<chapter number="16">
				<verse number="1">ಕಳುಹಿಸಿ ಕುರಿಗಳನು ಕಪ್ಪಕಾಣಿಕೆಯಾಗಿ ದೇಶಾಧಿಪತಿಗೆ, ಕಳುಹಿಸಿ ಮರುಭೂಮಿಯ ಸೆಲಾದಿಂದ ಸಿಯೋನ್ ಪರ್ವತಕೆ.</verse>
				<verse number="2">ಮೋವಾಬಿನ ಮಹಿಳೆಯರು ಅರ್ನೊನ್ ನದಿಯ ಹಾಯ್ಗಡಗಳಲಿ, ಅಲೆಯುತಿಹರು ಗೂಡಿಂದ ಹೊರದೂಡಲಾದ ಹಕ್ಕಿಮರಿಗಳ ಪರಿ.</verse>
				<verse number="3">ಇಂತೆನ್ನುವರವರು ಯೆಹೂದ ಜನತೆಗೆ: “ನೀಡಿ ಸಲಹೆಯೊಂದನ್ನು ನಮಗೆ, ಕೊಡಿ ನ್ಯಾಯತೀರ್ಪನೆಮಗೆ, ಇರುಳಿನಂತಿರಲಿ ನಿಮ್ಮ ನೆರಳು ಉರಿಬಿಸಿಲೊಳೆಮಗೆ, ನೆಲೆನೀಡಿ ವಲಸಿಗರಿಗೆ, ದೂಡಬೇಡಿ ಅಲೆಯುವವರನು ಬಯಲಿಗೆ.</verse>
				<verse number="4">ನೆಲೆನೀಡಿ ಮೋವಾಬ್ ನಾಡಿನಿಂದ ವಲಸೆಬಂದಿಹ ನಮಗೆ, ವಿನಾಶಕರಿಗೆ ವಶವಾಗದಂತೆ ಆಶ್ರಯ ನೀಡಿ ನಮಗೆ, ನಾಡಿನಿಂದ ನಿರ್ಮೂಲವಾಗುವರು ವಿಧ್ವಂಸಕರು, ನಿಂತುಹೋಗುವುವು ನಾಶವಿನಾಶಗಳು, ಅಳಿದುಹೋಗುವರು ತುಳಿದು ಹಾಳುಮಾಡುವವರು.</verse>
				<verse number="5">ಸ್ಥಾಪಿತವಾಗುವುದಾಗ ಅಚಲ ಒಲವಿನ ಸಿಂಹಾಸನವು, ಅದನಲಂಕರಿಸುವನು ಪ್ರಾಮಾಣಿಕ ದಾವೀದ ವಂಶಜನು. ದೊರಕಿಸುವನಾತ ನ್ಯಾಯನೀತಿಯನು, ಶೀಘ್ರದಲೆ ನೆರವೇರಿಸುವನು ಸರಿಕಂಡದುದನು.”</verse>
				<verse number="6">ಯೆಹೂದ ಜನತೆ ಪೇಳ್ವರವರಿಗೆ: “ನಮ್ಮ ಕಿವಿಗೆ ಬಿದ್ದಿದೆ ಮೋವಾಬ್ಯರ ಮದ, ತಿಳಿದಿದೆ ನಮಗೆ ಅವರ ದುರಹಂಕಾರ, ಅವರ ಒಣ ಡಂಭಾಚಾರ, ಗರ್ವೋದ್ರೇಕ\.</verse>
				<verse number="7">ಇದಕಾರಣ ಮೋವಾಬ್ಯರೇ ಗೋಳಾಡಲಿ, ಪ್ರಲಾಪಿಸಲಿ ಪ್ರತಿಯೊಬ್ಬನು ಮೋವಾಬಿಗಾಗಿ, ಕೀರ್ ಹರೆಷೆಥಿನ ದೀಪದ್ರಾಕ್ಷಿಯ ಕಡುಬಿಗಾಗಿ, ನೆನೆದು ನರಳಿ ಹಲುಬಲಿ ಅದಕ್ಕಾಗಿ.</verse>
				<verse number="8">ನಿಸ್ಸಾರವಾಗಿದೆ ಹೆಷ್ಬೋನಿನ ಹೊಲ, ಸಿಬ್ಮದ ದ್ರಾಕ್ಷಾಲತೆ, ಒಮ್ಮೆ ವ್ಯಾಪಿಸಿತ್ತು ಆ ರಾಜ್ಯದ್ರಾಕ್ಷಿ ಯಜ್ಜೇರಿನವರೆಗೆ, ಹಬ್ಬಿತ್ತದರ ಶಾಖೆ ಮರುಭೂಮಿಗೆ, ಸಮುದ್ರದಾಚೆ, ಮಾಡಿತು ನಾಡಿನೊಡೆಯರನು ಕುಡಿದು ಮತ್ತರಾಗುವಂತೆ.</verse>
				<verse number="9">ಎಂದೇ ಸಿಬ್ಮದ ದ್ರಾಕ್ಷಾಲತೆಯ ನಿಮಿತ್ತ, ಕಣ್ಣೀರಿಡುವೆನು ಯಜ್ಜೇರಿನವರ ಸಮೇತ, ತೋಯಿಸುತಿಹೆನು ಹೆಷ್ಬೋನನು, ಎಲ್ಲಾನನು ಕಣ್ಣೀರಿಂದ, ಏಕೆನೆ ಇಲ್ಲವಾಗಿದೆ ಅಲ್ಲಿ ಹಣ್ಣುಹಂಪಲು ಸುಗ್ಗಿಯ ಗೀತ.</verse>
				<verse number="10">ತೊಲಗಿದೆ ಹೊಲಗಳಿಂದ ಹರ್ಷಾನಂದ, ಇಲ್ಲವಾಗಿದೆ ತೋಟಗಳಲಿ ಜಯಕಾರದ ನಾದ, ದ್ರಾಕ್ಷಾರಸವನು ತೆಗೆವವರಿಲ್ಲ ಅರಮನೆಗಳಿಂದ, ಎಂತಲೆ ನಿಂತುಹೋಗಿಹುದಲ್ಲಿ ಸುಗ್ಗಿಯ ಗೀತ.</verse>
				<verse number="11">ಮೋವಾಬಿನ ನಿಮಿತ್ತ ಮಿಡಿಯುತಿದೆಯೆನ್ನ ಮನ ದುಃಖದಿಂದ, ವೀಣೆಯ ತಂತಿಯಂತೆ ತುಡಿಯುತಿದೆಯೆನ್ನ ಅಂತರಂಗ ಕೀರ್ ಹೆರೆಷಿನ ನಿಮಿತ್ತ.</verse>
				<verse number="12">ವ್ಯರ್ಥ, ಬೆಟ್ಟಗುಡ್ಡಗಳಿಗೆ ಮೋವಾಬ್ಯರು ತೀರ್ಥಯಾತ್ರೆಗೈದರೂ, ವ್ಯರ್ಥ, ಪ್ರಾರ್ಥನೆ ಮಾಡಲು ಅವರು ಗರ್ಭಗುಡಿಗೆ ಹೋದರೂ.</verse>
				<verse number="13">ಮೋವಾಬ್ಯರ ವಿಷಯವಾಗಿ ಸರ್ವೇಶ್ವರ ಹಿಂದೆ ನುಡಿದ ದೇವೋಕ್ತಿಯಿದೇ:</verse>
				<verse number="14">ಸರ್ವೇಶ್ವರ ಇಂತೆನ್ನುತ್ತಾರೆ: “ಗುಲಾಮಗಿರಿಯ ಕಟ್ಟುನಿಟ್ಟಿನ ಲೆಕ್ಕಾಚಾರದಂತೆ, ಮೂರು ವರ್ಷದೊಳಗೆ ಮೋವಾಬಿನ ವೈಭವವು ಹೀನಾಯಕ್ಕೆ ಈಡಾಗುವುದು. ಅಲ್ಲಿನವರ ಅಗಣ್ಯ ಜನಸಂಖ್ಯೆಯಲ್ಲಿ ಅಳಿದುಳಿಯುವವರು ಕೆಲವೇ ದುರ್ಬಲರು\.</verse>
			</chapter>
			<chapter number="17">
				<verse number="1">ದಮಸ್ಕಸ್ ವಿಷಯವಾಗಿ ದೈವೋಕ್ತಿ: “ಇದೋ, ದಮಸ್ಕಸ್ ಊರಾಗಿ ಉಳಿಯದು, ಅದೊಂದು ಹಾಳುದಿಬ್ಬವಾಗುವುದು.</verse>
				<verse number="2">ಸಿರಿಯದ ನಗರಗಳೆಲ್ಲ ನಿರ್ಜನ ಪ್ರದೇಶಗಳಾಗಿ ಗೋಮಾಳವಾಗುವುವು. ಅಲ್ಲಿ ದನಕರುಗಳು ನಿರ್ಭಯದಿಂದ ತಂಗುವುವು.</verse>
				<verse number="3">ಎಫ್ರಯಿಮಿಗೆ ಕೋಟೆಕೊತ್ತಲಗಳು, ದಮಸ್ಕಸ್ಸಿಗೆ ರಾಜ್ಯಾಡಳಿತವು ಇಲ್ಲದಂತಾಗುವುವು. ಸಿರಿಯದಲ್ಲಿ ಅಳಿದುಳಿದವರು ಅಪಮಾನಕ್ಕೀಡಾಗುವರು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.</verse>
				<verse number="4">“ಆ ದಿನದಂದು ಇಸ್ರಯೇಲಿನ ಕೊಬ್ಬು ಕರಗುವುದು. ಅದರ ಮಹಿಮೆ ಕ್ಷಯಿಸಿಹೋಗುವುದು.</verse>
				<verse number="5">ಅದು ಕೊಯ್ದ ಹೊಲದಂತಿರುವುದು, ತೆನೆಕತ್ತರಿಸಿದ ಹುಲ್ಲಿನಂತಿರುವುದು. ಕೂಳೆಯನ್ನೂ ಬಿಡದೆ ಆಯ್ದುಕೊಂಡ ರೆಫಾಯಿಮ್ ಕಣಿವೆಯಂತೆ ಇರುವುದು.</verse>
				<verse number="6">ಓಲಿವ್ ಮರದಲ್ಲಿ ಕಾಯಿಯನ್ನು ಉದುರಿಸಿದ ನಂತರ ಅದರ ತುತ್ತತುದಿಯಲ್ಲಿ ಎರಡು ಮೂರೇ ಕಾಯಿಗಳಿರುವುವು: ಅದರ ಫಲಭರಿತ ರೆಂಬೆಗಳಲ್ಲಿ ನಾಲ್ಕೈದೇ ಕಾಯಿಗಳಿರುವುವು. ಅಂತೆಯೇ ಇಸ್ರಯೇಲಿನಲ್ಲಿ ಅಳಿದುಳಿಯುವವರು ಕೆಲವರು ಮಾತ್ರ” ಎನ್ನುತ್ತಾರೆ ಇಸ್ರಯೇಲಿನ ದೇವರಾದ ಸರ್ವೇಶ್ವರ.</verse>
				<verse number="7">ಆ ದಿನದಂದು ಜನರು ತಮ್ಮ ಕೈಯಿಂದ ಕಟ್ಟಿದ ಬಲಿಪೀಠಗಳನ್ನಾಗಲೀ, ಬೆರಳುಗಳಿಂದ ನಿರ್ಮಿಸಿದ ಆಶೇರಾ ದೇವತೆಯ ಸ್ತಂಭಗಳನ್ನಾಗಲೀ, ಧೂಪವೇದಿಕೆಗಳನ್ನಾಗಲೀ ಪೂಜಿಸದೆ ತಮ್ಮ ಸೃಷ್ಟಿಕರ್ತನನ್ನೇ ಲಕ್ಷಿಸಿ, ಇಸ್ರಯೇಲಿನ ಪರಮಪಾವನ ಸ್ವಾಮಿಯ ಕಡೆ ತಿರುಗಿಕೊಳ್ಳುವರು.</verse>
				<verse number="8"></verse>
				<verse number="9">ಆ ದಿನದಂದು ನಾಡಿನ ಸುಭದ್ರವಾದ ನಗರಗಳು ನಿರ್ಜನ ಪ್ರದೇಶಗಳಾಗುವುವು. ಇಸ್ರಯೇಲರಿಗೆ ಹೆದರಿ ಅಮೋರ್ಯರು ಮತ್ತು ಹಿವ್ವಿಯರು ಬಿಟ್ಟುಹೋದ ಹಾಳು ನಿವೇಶನಗಳಂತಾಗುವುವು, ನಾಡೆಲ್ಲ ಹಾಳುಬೀಳುವುದು.</verse>
				<verse number="10">ಇಸ್ರಯೇಲೇ, ನಿನ್ನ ಉದ್ಧಾರಕನಾದ ದೇವರನ್ನು ನೀನು ಸ್ಮರಿಸಲಿಲ್ಲ. ನಿನಗೆ ಆಶ್ರಯವಿತ್ತ ಪೊರೆಬಂಡೆಯನ್ನು ಮರೆತುಹೋದೆ. ಬದಲಿಗೆ ಅನ್ಯದೇವರ ಆರಾಧನೆಗಾಗಿ ನಿನಗಿಷ್ಟವಾದ ಉದ್ಯಾನವನಗಳನ್ನು ನೆಟ್ಟೆ.</verse>
				<verse number="11">ಬೀಜವನ್ನು ನೆಟ್ಟ ದಿನವೇ ಬೇಲಿಕಟ್ಟಿದೆ. ಮಾರನೆಯ ದಿನವೇ ಅದು ಮೊಳೆಯುವಂತೆ ಮಾಡಿದೆ. ಆದರೂ ನಿನಗೆ ಸಿಗುವ ಸುಗ್ಗಿ, ವ್ಯಾಧಿ ಮತ್ತು ಅತೀವ ವ್ಯಥೆಯೇ.</verse>
				<verse number="12">ಸಮುದ್ರದಂತೆ ಭೋರ್ಗರೆಯುವ, ಪ್ರಚಂಡ ಜನಪ್ರವಾಹಗಳಂತೆ ಗರ್ಜಿಸುವ ಪ್ರಬಲ ರಾಷ್ಟ್ರಗಳ ಆರ್ಭಟವನ್ನು ಕೇಳಿ.</verse>
				<verse number="13">ಹೌದು, ಪ್ರಚಂಡ ಜಲಪ್ರವಾಹಗಳಂತೆ ಪ್ರಬಲ ರಾಷ್ಟ್ರಗಳು ಆರ್ಭಟಿಸುತ್ತವೆ. ಆದರೆ ದೇವರು ಅವರನ್ನು ಗದರಿಸುವರು. ಅವರು ಬಿರುಗಾಳಿಗೆ ಸಿಕ್ಕಿದ ಬೆಟ್ಟದ ಹೊಟ್ಟಿನಂತೆ, ಸುಂಟರಗಾಳಿಗೆ ಸುತ್ತುವ ಧೂಳಿನಂತೆ ಓಡುವರು.</verse>
				<verse number="14">ಬೈಗಿನಲ್ಲಿ ಇಗೋ, ಎಲ್ಲೆಲ್ಲೂ ಭಯ, ಬೆಳಗಾದಾಗ ಅವೆಲ್ಲ ಮಾಯ; ಇದೇ ನಮ್ಮನ್ನು ಸೂರೆಮಾಡುವವರ ಗತಿ, ನಮ್ಮನ್ನು ಕೊಳ್ಳೆಹೊಡೆಯುವವರ ಪಾಡು!.</verse>
			</chapter>
			<chapter number="18">
				<verse number="1">ಎಥಿಯೋಪಿಯದ ನದಿಗಳಾಚೆ ಇರುವ ಸೀಮೆಗೆ ಧಿಕ್ಕಾರ! ರೆಕ್ಕೆಗಳನ್ನು ಪಟಪಟನೆ ಬಡಿಯುವ ಮಿಡತೆಗಳಿಂದ ಕೂಡಿರುವ ನಾಡಿಗೆ ಧಿಕ್ಕಾರ!</verse>
				<verse number="2">ಜೊಂಡು ಮರದ ದೋಣಿಗಳಲ್ಲಿ ನೈಲುನದಿಯ ಮಾರ್ಗವಾಗಿ, ರಾಯಭಾರಿಗಳನ್ನು ಕಳುಹಿಸುವ ಆ ದೇಶಕ್ಕೆ ಧಿಕ್ಕಾರ! ಶೀಘ್ರವಾಗಿ ಬರುತ್ತಿರುವ ದೂತರೇ, ಹಿಂದಕ್ಕೆ ಹೋಗಿ, ಎತ್ತರವಾದ ನುಣುಪಾದ ಮೈಕಟ್ಟುಳ್ಳ, ಸರ್ವರಿಗೂ ಭಯಪ್ರದರಾಗಿರುವ, ಪ್ರಬಲ ಆಕ್ರಮಣಕಾರಿಗಳೂ ಆದ, ನದಿಗಳಿಂದ ಸೀಳಿಹೋಗಿರುವ ರಾಷ್ಟ್ರದವರ ಬಳಿಗೆ ತೆರಳಿ.</verse>
				<verse number="3">ಸಮಸ್ತ ಭೂನಿವಾಸಿಗಳೇ, ಜಗದ ಸಕಲ ಜನಾಂಗಗಳೇ, ಕೇಳಿ: ಬೆಟ್ಟಗಳ ಮೇಲೆ ಧ್ವಜಾರೋಹಣ ಮಾಡುವಾಗ ಕಣ್ಣಿಟ್ಟು ನೋಡಿ, ತುತೂರಿಯನ್ನು ಊದುವಾಗ ಕಿವಿಗೊಟ್ಟು ಕೇಳಿ,</verse>
				<verse number="4">ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ: “ಬಿಸಿಹಗಲಿನ ಸೂರ್ಯನಂತೆ, ಕೊಯಿಲುಗಾಲದಲ್ಲಿರುವ ಮಂಜಿನಂತೆ, ನಾನು ನನ್ನ ನಿವಾಸಸ್ಥಾನದಿಂದ ಸುಮ್ಮನೆ ನೋಡುತ್ತಿರುವೆನು.”</verse>
				<verse number="5">ಗಿಡದಲ್ಲಿ ಮೊಗ್ಗು ಕಚ್ಚಿ, ಹೂ ಅರಳಿ, ಹೀಚು ದೋರೆಗಾಯಿಯಾಗುತ್ತಿರುವಾಗ, ಕೊಯಿಲು ಕಾಲಕ್ಕೆ ಮುಂಚೆಯೇ ಅದರ ಕೊಂಬೆಗಳನ್ನೂ ಕವಲುಗಳನ್ನೂ ಶತ್ರುಗಳು ಕತ್ತರಿಸಿಹಾಕುವರು.</verse>
				<verse number="6">ಹೀಗೆ ಕಡಿಯಲ್ಪಟ್ಟವರ ಶವಗಳೆಲ್ಲ ರಣಹದ್ದುಗಳ ಮತ್ತು ಕಾಡುಮೃಗಗಳ ಪಾಲಾಗುವುವು; ಪಕ್ಷಿಗಳಿಗೆ ಬೇಸಿಗೆಯ ಆಹಾರವಾಗುವುವು, ಪ್ರಾಣಿಗಳಿಗೆ ಚಳಿಗಾಲದ ಉಣಿಸಾಗುವುವು.</verse>
				<verse number="7">ಆಗ ಎತ್ತರವಾದ, ನುಣುಪಾದ ಮೈಕಟ್ಟುಳ್ಳ, ಸರ್ವರಿಗೂ ಭಯಪ್ರದರಾದ, ಪ್ರಬಲ ಆಕ್ರಮಣಕಾರಿಗಳಾದ, ನದಿಗಳಿಂದ ಸೀಳಿಹೋಗಿರುವ ರಾಷ್ಟ್ರದವರು ಸರ್ವೇಶ್ವರ ಸ್ವಾಮಿಯ ಹೆಸರಾಂತ ಸಿಯೋನ್ ಪರ್ವತಕ್ಕೆ ಬರುವರು. ಸೇನಾಧೀಶ್ವರ ಸರ್ವೇಶ್ವರ ಅವರಿಂದ ಕಾಣಿಕೆಗಳನ್ನು ಸ್ವೀಕರಿಸುವರು.</verse>
			</chapter>
			<chapter number="19">
				<verse number="1">ಈಜಿಪ್ಟಿನ ವಿಷಯವಾಗಿ ದೈವೋಕ್ತಿ: ಇಗೋ, ಸರ್ವೇಶ್ವರ ವೇಗವಾಗಿ ಚಲಿಸುವ ಮೇಘಗಳ ಮೇಲೆ ಈಜಿಪ್ಟಿಗೆ ಬರುವರು. ಅವರ ಮುಂದೆ ಈಜಿಪ್ಟಿನ ವಿಗ್ರಹಗಳು ನಡುಗುವುವು. ಈಜಿಪ್ಟಿನವರ ಹೃದಯ ಕರಗಿ ನೀರಾಗುವುದು.</verse>
				<verse number="2">ಸರ್ವೇಶ್ವರ ಇಂತೆನ್ನುತ್ತಾರೆ: “ನಾನು ಈಜಿಪ್ಟಿನವರಲ್ಲಿ ಒಳಜಗಳವನ್ನು ಎಬ್ಬಿಸುವೆನು. ಅಣ್ಣತಮ್ಮಂದಿರು, ನೆರೆಹೊರೆಯವರು, ನಗರನಗರಗಳು, ರಾಜರಾಜರುಗಳು ಪರಸ್ಪರ ಕಾದಾಡುವರು.</verse>
				<verse number="3">ಈಜಿಪ್ಟಿನವರ ಚೈತನ್ಯ ಉಡುಗಿಹೋಗುವುದು. ಅವರ ಯೋಜನೆಗಳು ಭಂಗವಾಗುವುವು. ಜನರು ವಿಗ್ರಹಗಳನ್ನು, ಮಂತ್ರಗಾರರನ್ನು, ಪ್ರೇತವಿಚಾರಕರನ್ನು, ಕಣಿಹೇಳುವವರನ್ನು ಆಶ್ರಯಿಸುವರು.”</verse>
				<verse number="4">“ಇದಲ್ಲದೆ ಈಜಿಪ್ಟಿನವರನ್ನು ಕ್ರೂರ ಅರಸನ ವಶಕ್ಕೆ ಒಪ್ಪಿಸುವೆನು. ರಾಜನು ದಬ್ಬಾಳಿಕೆಯಿಂದ ಅವರನ್ನು ಆಳುವನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.”</verse>
				<verse number="5">ನೈಲ್ ನದಿಯ ನೀರು ಬತ್ತಿಹೋಗುವುದು. ಅದರ ಪ್ರಭಾವ ಕ್ರಮೇಣ ಒಣಗಿಹೋಗುವುದು.</verse>
				<verse number="6">ಕಾಲುವೆಗಳು ನಾರುವುವು. ಈಜಿಪ್ಟಿನ ಉಪನದಿಗಳು ಇಳಿದು ಇಂಗಿಹೋಗುವುವು.</verse>
				<verse number="7">ನದಿಯ ತೀರಗಳು ಬರಡಾಗುವುವು. ನದಿಯಲ್ಲಿ ಬಿದ್ದ ಬೀಜಗಳೆಲ್ಲ ಒಣಗಿ ಗಾಳಿಗೆ ತೂರಿಹೋಗುವುವು.</verse>
				<verse number="8">ಬೆಸ್ತರು ಕಣ್ಣೀರಿಡುವರು; ಗಾಳ ಹಾಕುವವರು ಗೋಳಿಡುವರು; ಬಲೆ ಬೀಸುವವರು ಸೊರಗಿಹೋಗುವರು.</verse>
				<verse number="9">ನಯವಾದ ನಾರುಮಡಿಯನ್ನು ಮತ್ತು ಬಿಳೀ ಬಟ್ಟೆಯನ್ನು ನೇಯುವವರೆಲ್ಲ ಹತಾಶರಾಗುವರು.</verse>
				<verse number="10">ನಾಡಿನ ಜವಳಿ ವ್ಯಾಪಾರಿಗಳು, ಕೂಲಿಯಾಳುಗಳು ಚಿಂತಾಕ್ರಾಂತರಾಗುವರು.</verse>
				<verse number="11">“ಚೋಯನಿನ ಅಧಿಪತಿಗಳು ಮಂದಮತಿಗಳು. ಫರೋಹನ ಮುಖ್ಯಮಂತ್ರಿಗಳು ಕೊಡುವುದು ಹುಚ್ಚು ಆಲೋಚನೆಗಳನ್ನೇ. ‘ನಾವು ಪುರಾತನ ವಿದ್ವಾಂಸರ ವಂಶಜರು. ರಾಜರ್ಷಿಗಳ ಸಂತತಿಯವರು’ ಎಂದು ನೀವು ಫರೋಹನಿಗೆ ಹೇಳಲು ಸಾಧ್ಯವೇ?</verse>
				<verse number="12">ಈಜಿಪ್ಟಿನ ಅರಸನೇ, ನಿನ್ನ ವಿದ್ವಾಂಸರೆಲ್ಲಿ? ಅವರೇ ನಿನಗೆ ತಿಳುವಳಿಕೆ ಕೊಡಲಿ. ಈಜಿಪ್ಟಿನ ವಿರೋಧವಾಗಿ ಸೇನಾಧೀಶ್ವರ ಸರ್ವೇಶ್ವರ ಯೋಚಿಸಿರುವುದನ್ನು ಅವರೇ ನಿನಗೆ ತಿಳಿಯಪಡಿಸಲಿ.</verse>
				<verse number="13">ಚೋಯನಿನ ಅಧಿಪತಿಗಳು ಮಂದಮತಿಗಳು. ನೋಫಿನ ಮುಖ್ಯಮಂತ್ರಿಗಳು ಮೋಸಗಾರರು. ಈಜಿಪ್ಟ್ ಜನಾಂಗದ ಮೂಲೆಗಲ್ಲಿನಂತಿದ್ದವರೇ ಜನರನ್ನು ತಪ್ಪುದಾರಿಗೆ ಎಳೆದಿದ್ದಾರೆ.</verse>
				<verse number="14">ಸರ್ವೇಶ್ವರ ಅವರ ಮನಸ್ಸಿನಲ್ಲಿ ಚಂಚಲಭಾವವನ್ನು ಮೂಡಿಸಿದ್ದಾರೆ. ಅಮಲೇರಿದವನು ಕಕ್ಕುತ್ತಾ ಅತ್ತಿತ್ತ ಓಲಾಡುವ ಪ್ರಕಾರ ಈಜಿಪ್ಟಿನವರು ತಮ್ಮ ಒಂದೊಂದು ಕೆಲಸಕಾರ್ಯದಲ್ಲೂ ಅಸ್ಥಿರರಾಗಿರುವಂತೆ ಮಾಡಿದ್ದಾರೆ.</verse>
				<verse number="15">ಹೀಗೆ ಈಜಿಪ್ಟಿಗೆ ತಲೆಯಾಗಲಿ ಬಾಲವಾಗಲಿ, ತಾಳೆಯಾಗಲಿ ತೃಣವಾಗಲಿ ನೆರವಾಗಲು ಸಾಧ್ಯವಿಲ್ಲದಂತಾಗಿದೆ.</verse>
				<verse number="16">ಆ ದಿನದಂದು ಈಜಿಪ್ಟಿನವರು ಹೆಂಗಸರಂತೆ ಅಂಜುಬುರುಕರಾಗುವರು; ಸೇನಾಧೀಶ್ವರ ಸರ್ವೇಶ್ವರ ತಮ್ಮನ್ನು ದಂಡಿಸಲು ಕೈಯೆತ್ತುವಾಗ ಅವರು ಭಯಪಟ್ಟು ನಡುಗುವರು.</verse>
				<verse number="17">ಜುದೇಯ ನಾಡು ಈಜಿಪ್ಟಿನವರಿಗೆ ಭಯಂಕರವಾಗಿರುವುದು. ಆ ನಾಡಿನ ಹೆಸರನ್ನು ಕೇಳಿದ್ದೇ ತಡ, ಪ್ರತಿಯೊಬ್ಬನೂ ಬೆಚ್ಚಿಬೀಳುವನು. ಪ್ರತಿಯೊಬ್ಬನೂ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಈಜಿಪ್ಟಿನ ವಿರುದ್ಧ ಮಾಡಿರುವ ಸಂಕಲ್ಪವನ್ನು ತಿಳಿದು ನಿಬ್ಬೆರಗಾಗುವನು.</verse>
				<verse number="18">ಆ ದಿನದಂದು ಈಜಿಪ್ಟಿನ ನಾಡಿನಲ್ಲಿ ಐದು ಪಟ್ಟಣಗಳಲ್ಲಿ ಕಾನಾನಿನ (ಹಿಬ್ರು) ಭಾಷೆಯನ್ನಾಡುವ ಜನರು ತುಂಬಿರುವರು. ಅವರು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಶರಣರೆಂದು ಪ್ರಮಾಣ ಮಾಡುವರು. ಆ ಪಟ್ಟಣಗಳಲ್ಲಿ ಒಂದಕ್ಕೆ “ರವಿಪುರ” ಎಂಬ ಹೆಸರಿರುವುದು.</verse>
				<verse number="19">ಆ ದಿನದಂದು ಈಜಿಪ್ಟಿನ ನಡುವೆ ಸರ್ವೇಶ್ವರ ಸ್ವಾಮಿಗೆ ಒಂದು ಬಲಿಪೀಠವಿರುವುದು ಮತ್ತು ನಾಡಿನ ಗಡಿಯಲ್ಲಿ ಸ್ವಾಮಿಯ ಸ್ಥಂಭ ಇರುವುದು.</verse>
				<verse number="20">ಇವು ಈಜಿಪ್ಟ್ ದೇಶಕ್ಕೆ ಸರ್ವೇಶ್ವರ ಸ್ವಾಮಿಯ ಸಂಕೇತವಾಗಿಯೂ ಸಾಕ್ಷಿಯಾಗಿಯೂ ಇರುವುವು. ಅವರು ತಮ್ಮನ್ನು ಬಾಧಿಸುವವರ ವಿರುದ್ಧ ಸರ್ವೇಶ್ವರ ಸ್ವಾಮಿಗೆ ಮೊರೆಯಿಟ್ಟಾಗ, ಸ್ವಾಮಿಯು ವೀರನಾದ ರಕ್ಷಕನೊಬ್ಬನನ್ನು ಕಳುಹಿಸುವರು. ಆತನು ಆ ಜನರನ್ನು ಬಿಡುಗಡೆಮಾಡಿ ಉದ್ಧರಿಸುವನು.</verse>
				<verse number="21">ಸರ್ವೇಶ್ವರ ಸ್ವಾಮಿಯೇ ಈಜಿಪ್ಟಿನವರಿಗೆ ತಿಳಿಯಪಡಿಸುವರು. ಜನರು ಸ್ವಾಮಿಯನ್ನು ಅರಿತುಕೊಂಡು, ಯಜ್ಞನೈವೇದ್ಯಗಳನ್ನು ಕಾಣಿಕೆಯಾಗಿ ಸಮರ್ಪಿಸುವರು, ಹೊತ್ತ ಹರಕೆಗಳನ್ನು ನೆರವೇರಿಸುವರು.</verse>
				<verse number="22">ಇದಲ್ಲದೆ ಸರ್ವೇಶ್ವರ ಈಜಿಪ್ಟಿನವರನ್ನು ದಂಡಿಸುವರು, ಗಾಯಗೊಳಿಸಿದರೂ ಗುಣಪಡಿಸುವರು. ಈಜಿಪ್ಟಿನವರು ಸ್ವಾಮಿಯ ಕಡೆಗೆ ತಿರುಗಿಕೊಳ್ಳುವರು. ಸ್ವಾಮಿ ಅವರ ಮೊರೆಯನ್ನು ಆಲಿಸಿ ಅವರನ್ನು ಗುಣಪಡಿಸುವರು.</verse>
				<verse number="23">ಆ ದಿನದಂದು ಈಜಿಪ್ಟ್ ಮತ್ತು ಅಸ್ಸೀರಿಯರ ನಡುವೆ ಹೆದ್ದಾರಿ ಇರುವುದು. ಅಸ್ಸೀರಿಯದವರು ಈಜಿಪ್ಟಿಗೂ ಈಜಿಪ್ಟಿನವರು ಅಸ್ಸೀರಿಯಕ್ಕೂ ಸಂಚಾರಮಾಡುವರು. ಈಜಿಪ್ಟಿನವರು ಅಸ್ಸೀರಿಯದವರೊಡನೆ ಸೇರಿ ಸರ್ವೇಶ್ವರ ಸ್ವಾಮಿಯನ್ನು ಆರಾಧಿಸುವರು.</verse>
				<verse number="24">ಆ ದಿನದಂದು ಇಸ್ರಯೇಲ್ ಈಜಿಪ್ಟಿನೊಂದಿಗೂ ಅಸ್ಸೀರಿಯದೊಂದಿಗೂ ಸೇರುವುದು. ಈ ಮೂರು ರಾಷ್ಟ್ರಗಳು ಇಡೀ ಜಗಕ್ಕೆ ಆಶೀರ್ವಾದದ ಕೇಂದ್ರವಾಗಿ ಪರಿಣಮಿಸುವುವು.</verse>
				<verse number="25">“ನನ್ನ ಪ್ರಜೆಯಾದ ಈಜಿಪ್ಟ್, ನನ್ನ ಕೈಚಳಕದ ಅಸ್ಸೀರಿಯಾ, ನನ್ನ ಸೊತ್ತಾದ ಇಸ್ರಯೇಲ್ ನಿಮಗೆ ಶುಭಮಂಗಳ,” ಎಂದು ಅವುಗಳನ್ನು ಸರ್ವಶಕ್ತ ಸರ್ವೇಶ್ವರ ಸ್ವಾಮಿ ಆಶೀರ್ವದಿಸುವರು.</verse>
			</chapter>
			<chapter number="20">
				<verse number="1">ಅಸ್ಸೀರಿಯಾದ ಅರಸನಾದ ಸರ್ಗೋನನು ಕಳುಹಿಸಿದ ದಳಪತಿ, ಫಿಲಿಷ್ಟಿಯರ ಪಟ್ಟಣವಾದ ಅಷ್ಡೋದಿಗೆ ಬಂದು ಅದನ್ನು ಮುತ್ತಿ ಆಕ್ರಮಿಸಿಕೊಂಡನು.</verse>
				<verse number="2">ಅದಕ್ಕೆ ಮೂರು ವರ್ಷಗಳಿಗೆ ಮುಂಚೆಯೆ ಆಮೋಚನ ಮಗ ಯೆಶಾಯನಿಗೆ ಸರ್ವೇಶ್ವರ ಮುನ್ಸೂಚನೆಯಾಗಿ ಹೀಗೆಂದು ಹೇಳಿದ್ದರು: “ಎದ್ದೇಳು, ಸೊಂಟಕ್ಕೆ ಕಟ್ಟಿರುವ ಗೋಣಿತಟ್ಟನ್ನು ಬಿಚ್ಚು, ಕಾಲಿಗೆ ಹಾಕಿರುವ ಕೆರವನ್ನು ಕಳಚು.” ಅಂತೆಯೇ ಯೆಶಾಯನು ದಿಗಂಬರನಾಗಿ ಬರಿಗಾಲಿನಲ್ಲೇ ತಿರುಗಾಡುತ್ತಿದ್ದನು.</verse>
				<verse number="3">ಆಗ ಸರ್ವೇಶ್ವರ: “ನನ್ನ ದಾಸ ಯೆಶಾಯನು ಈಜಿಪ್ಟಿನ ಮತ್ತು ಸುಡಾನಿನ ವಿನಾಶಕ್ಕೆ ಸೋಜಿಗದ ಗುರುತಾಗಿ ಮೂರು ವರ್ಷ ಬಟ್ಟೆಯಿಲ್ಲದೆ ಬರಿಗಾಲಿನಲ್ಲಿ ತಿರುಗಾಡಿದನು.</verse>
				<verse number="4">ಅದೇ ಪ್ರಕಾರ ಅಸ್ಸೀರಿಯದ ಅರಸನು ಈಜಿಪ್ಟಿನ ಸೆರೆಯಾಳುಗಳನ್ನೂ ಸುಡಾನಿನ ಕೈದಿಗಳನ್ನೂ - ದೊಡ್ಡವರು ಚಿಕ್ಕವರು ಎನ್ನದೆ ಎಲ್ಲರನ್ನೂ ಬಟ್ಟೆಯಿಲ್ಲದೆ ಬೆತ್ತಲೆಯಾಗಿಸಿ, ಬರಿಗಾಲಿನಲ್ಲೇ ಸೆರೆಮನೆಗೆ ನಡೆಯುವಂತೆ ಮಾಡುವನು. ಹೀಗೆ ಈಜಿಪ್ಟಿನ ನಿವಾಸಿಗಳನ್ನು ಮಾನಭಂಗಕ್ಕೆ ಗುರಿಪಡಿಸುವನು.</verse>
				<verse number="5">ಸುಡಾನನ್ನು ನೆಚ್ಚಿಕೊಂಡಿದ್ದವರು ಮತ್ತು ಈಜಿಪ್ಟನ್ನು ಕುರಿತು ಕೊಚ್ಚಿಕೊಳ್ಳುತ್ತಿದ್ದವರು ನಾಚಿಕೆಪಟ್ಟು ನಿರಾಶೆಗೊಳ್ಳುವರು.</verse>
				<verse number="6">ಆ ದಿನದಂದು (ಫಿಲಿಷ್ಟಿಯದ) ಕರಾವಳಿಯಲ್ಲಿ ವಾಸಿಸುವರು. ‘ಅಯ್ಯೋ ಅಸ್ಸೀರಿಯರ ಅರಸನಿಂದ ನಾವು ಬಿಡುಗಡೆಯಾಗಬೇಕೆಂದು ಯಾರ ಆಶ್ರಯವನ್ನು ನಿರೀಕ್ಷಿಸಿಕೊಂಡಿದ್ದೇವೋ ಅವರಿಗೇ ಈ ಗತಿ ಬಂತಲ್ಲಾ; ಇನ್ನು ನಮ್ಮಂಥವರು ಉದ್ಧಾರವಾಗುವುದು ಹೇಗೆ?’ ಎಂದುಕೊಳ್ಳುವರು.”</verse>
			</chapter>
			<chapter number="21">
				<verse number="1">ಕಡಲಡವಿಯ ಕುರಿತು ದೈವೋಕ್ತಿ: ದಕ್ಷಿಣ ಸೀಮೆಯ ನಾಡನ್ನು ಕಸದಂತೆ ಗುಡಿಸುವ ಸುಂಟರಗಾಳಿಯ ಹಾಗೆ, ಅರಣ್ಯದ ಕಡೆಯ ಭಯಂಕರ ನಾಡಿನಿಂದ ಗಂಡಾಂತರ ಬರಲಿದೆ.</verse>
				<verse number="2">ಘೋರ ದರ್ಶನವೊಂದು ನನಗೆ ಕಂಡುಬಂತು: ದ್ರೋಹಿ ದ್ರೋಹವೆಸಗುತ್ತಿದ್ದಾನೆ. ಕೊಳ್ಳೆಗಾರ ಕೊಳ್ಳೆಹೊಡೆಯುತ್ತಿದ್ದಾನೆ. ಏಲಾಮೇ ಮುನ್ನುಗ್ಗು! ಮೇದ್ಯವೇ, ಮುತ್ತಿಗೆ ಹಾಕು! ಬಾಬಿಲೋನಿನಿಂದ ನಿನಗೊದಗಿದ ಗೋಳಾಟವನ್ನು ನಿಲ್ಲಿಸುತ್ತೇನೆ.</verse>
				<verse number="3">ನಾನು ಕಂಡ ಈ ಭೀಕರ ದರ್ಶನದಿಂದ ನನಗೆ ಸೊಂಟ ಮುರಿದಂತಾಗಿದೆ. ಹೆರಿಗೆಯಂಥ ಬೇನೆಯುಂಟಾಗಿದೆ. ಕಿವಿ ಕಿತ್ತುಹೋಗುವಂತಿದೆ. ಕಣ್ಣು ಕರುಡಾಗುವಂತಿದೆ.</verse>
				<verse number="4">ಹೃದಯ ಬಡಿದುಕೊಳ್ಳುತ್ತಿದೆ. ಭಯದಿಂದ ಮೈ ನಡುಗುತ್ತಿದೆ. ನಾ ಬಯಸಿದ ಸಂಜೆಯೇ ನನಗೆ ಅಂಜಿಕೆ ತರಬೇಕೆ?</verse>
				<verse number="5">ಔತಣ ಸಿದ್ಧವಾಗಿದೆ, ಚಾಪೆ ಹಾಸಿದ್ದಾರೆ. ಅತಿಥಿಗಳು ಭೋಜನ ಮಾಡುತ್ತಾ ಕುಡಿಯುತ್ತಾ ಇದ್ದಾರೆ. ಇದೋ, ಇದ್ದಕ್ಕಿದ್ದಂತೆ ಕೂಗೊಂದು ಕೇಳಿಬರುತ್ತಿದೆ: “ಪ್ರಭುಗಳೇ, ಎದ್ದೇಳಿ, ಗುರಾಣಿಗಳನ್ನು ಅಣಿಗೊಳಿಸಿರಿ.”</verse>
				<verse number="6">ಆಗ (ಸರ್ವೇಶ್ವರ ಸ್ವಾಮಿ) ನನಗೆ ಹೀಗೆಂದರು: “ಹೋಗು, ಪಹರೆಯೊಬ್ಬನನ್ನು ಇಡು. ಅವನು ಕಂಡದ್ದನ್ನು ವರದಿಮಾಡಲಿ.</verse>
				<verse number="7">ಜೋಡಿಜೋಡಿಯಾಗಿ ಬರುವ ಸವಾರರ ಪಂಕ್ತಿಯನ್ನೂ ಕತ್ತೆಗಳ ಹಾಗೂ ಒಂಟೆಗಳ ಸಾಲನ್ನೂ ನೋಡಿದಾಗ, ಎಚ್ಚರಿಕೆಯಿಂದ ಗಮನಿಸಲಿ!”</verse>
				<verse number="8">ಬಳಿಕ ಪಹರೆಯವನು ಸಿಂಹಧ್ವನಿಯಿಂದ: “ಸ್ವಾಮಿ, ಹಗಲೆಲ್ಲಾ ಕಾವಲು ಗೋಪುರದಲ್ಲಿ ನಿಂತಿದ್ದೇನೆ. ರಾತ್ರಿಯಲ್ಲೂ ಕಾವಲುಗೈದಿದ್ದೇನೆ.</verse>
				<verse number="9">ಇಗೋ, ಸವಾರರು ಜೋಡಿಜೋಡಿಯಾಗಿ ಬರುತಿಹರು,” ಎಂದು ಕೂಗಿ ಹೇಳುತ್ತಿದ್ದಾನೆ. ಅನಂತರ ಅವನು, “ಬಾಬಿಲೋನ್ ಬಿದ್ದುಹೋಯಿತು. ಅದರ ಪೂಜಾ ವಿಗ್ರಹಗಳೆಲ್ಲ ಒಡೆದು ಬೀದಿಪಾಲಾಗಿವೆ,” ಎಂದನು.</verse>
				<verse number="10">ನನ್ನ ಪ್ರಜೆಯೇ, ನನ್ನ ಕಣಜದ ದವಸವೇ, ಬಡಿತಕ್ಕೆ ಈಡಾದ ಜನರೇ, ಇಸ್ರಯೇಲರ ದೇವರಾದ ಸೇನಾಧಿಶ್ವರ ಸರ್ವೇಶ್ವರ ಸ್ವಾಮಿಯಿಂದ ನಾನು ಕೇಳಿದ್ದನ್ನೇ ತಿಳಿಸುತ್ತಿದ್ದೇನೆ.</verse>
				<verse number="11">‘ದೂಮ’ ಕುರಿತ ದೈವೋಕ್ತಿ: “ಪಹರೆಯವನೇ, ರಾತ್ರಿ ಕಳೆಯುವುದು ಯಾವಾಗ? ಪಹರೆಯವನೇ, ಕತ್ತಲು ಕಳೆಯುವುದು ಯಾವಾಗ?” ಎಂಬ ಕೂಗು ಸೇಯಾರಿನಿಂದ ನನಗೆ ಕೇಳಿಬಂತು.</verse>
				<verse number="12">ಅದಕ್ಕೆ ಪಹರೆಯವನು, “ಹಗಲು ಬರುತ್ತಿದೆ ಮತ್ತೆ ರಾತ್ರಿಯೂ ಬರುತ್ತದೆ. ಬೇಕಾದರೆ ಆಮೇಲೆ ಬಂದು ವಿಚಾರಿಸಿರಿ,” ಎಂದನು.</verse>
				<verse number="13">ಅರೇಬಿಯ ವಿಷಯವಾದ ದೈವೋಕ್ತಿ: ದೇದಾದಿನ ಜನರೇ, ಒಂಟೆ ಸವಾರರೇ, ಅರೇಬಿಯದ ಮರುಭೂಮಿಯಲ್ಲಿ ಬೀಡು ಬಿಡುವವರೇ,</verse>
				<verse number="14">“ಬಾಯಾರಿದವರಿಗೆ ನೀರನ್ನು ಕೊಡಿ. ತೇಮಾ ನಾಡಿನ ನಿವಾಸಿಗಳೇ, ವಲಸೆ ಬಂದವರಿಗೆ ಉಣಲು ಕೊಡಿ.</verse>
				<verse number="15">ಅವರೆಲ್ಲರು ಖಡ್ಗದಿಂದ, ಹಿರಿದ ಕತ್ತಿಯಿಂದ, ಹೂಡಿದ ಬಿಲ್ಲಿನಿಂದ, ಯುದ್ಧದ ಬಾಧೆಯಿಂದ ತಪ್ಪಿಸಿಕೊಂಡು ಓಡಿಬಂದಿರುವರು.”</verse>
				<verse number="16">ಸರ್ವೇಶ್ವರ ನನಗೆ ಹೀಗೆಂದರು: “ಗುಲಾಮಗಿರಿಯ ವಾಯಿದೆಯ ಪ್ರಕಾರ, ಒಂದು ವರ್ಷದೊಳಗೆ ಕೇದಾರಿನ ಸಕಲ ವೈಭವ ಗತಿಸಿಹೋಗುವುದು.</verse>
				<verse number="17">ಅಲ್ಲಿನ ಬಿಲ್ಲುಗಾರರಲ್ಲಿ ಉಳಿದವರಾಗಲೀ, ಕೇದಾರಿನ ರಣವೀರರಾಗಲೀ, ವಿರಳರಾಗುವರು. ಇಸ್ರಯೇಲರ ದೇವರಾದ ಸರ್ವೇಶ್ವರ ಸ್ವಾಮಿ ನಾನೇ ಇದನ್ನು ನುಡಿದಿದ್ದೇನೆ.”</verse>
			</chapter>
			<chapter number="22">
				<verse number="1">‘ದಿವ್ಯದರ್ಶನದ ಕಣಿವೆ’ಯ ಕುರಿತ ದೈವೋಕ್ತಿ: ಏನಾಯಿತು? ಜನರೆಲ್ಲರೂ ಮನೆಮಾಳಿಗೆಗಳನ್ನು ಏರಿ ಸಡಗರದಿಂದ ಇರುವುದೇಕೆ?</verse>
				<verse number="2">ಊರಿಗೆ ಊರೇ ಆರ್ಭಟಿಸುತ್ತಿರುವಂತಿದೆ! ಯುದ್ಧದಲ್ಲಿ ಸತ್ತ ನಿಮ್ಮ ಯೋಧರೆಲ್ಲ ಕಾದಾಟದಿಂದ ಮಡಿದವರಲ್ಲ.</verse>
				<verse number="3">ನಿಮ್ಮ ಮುಖಂಡರೆಲ್ಲ ಒಟ್ಟಿಗೆ ಪಲಾಯನಗೈದರು; ಒಂದೇ ಒಂದು ಬಾಣವನ್ನು ಬಿಡುವುದಕ್ಕೆ ಮುಂಚೆ ಸೆರೆಹೋದರು. ದೂರಕ್ಕೆ ಪಲಾಯನಗೈದಿದ್ದರೂ ಅವರೆಲ್ಲರೂ ಶತ್ರುವಿನ ಕೈಗೆ ಸಿಕ್ಕಿಬಿದ್ದಿದ್ದಾರೆ.</verse>
				<verse number="4">“ಆದ್ದರಿಂದ ನನ್ನ ಕಡೆ ನೋಡಬೇಡಿ. ನನ್ನನ್ನು ಸಂತೈಸಲು ಪ್ರಯತ್ನಿಸಬೇಡಿ. ಸತ್ತುಹೋದ ನನ್ನ ಜನರಿಗಾಗಿ ಕಣ್ಣೀರು ಸುರಿಸುತ್ತಿರುವೆನು” ಎಂದೆ ನಾನು.</verse>
				<verse number="5">ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಕಳುಹಿಸಿರುವ ದಿನವಿದು - ದಿವ್ಯದರ್ಶನದ ಕಣಿವೆಯ ದಿನ, ಗಲಿಬಿಲಿಯ ದಿನ, ತುಳಿದಾಟದ ದಿನ, ಭಯಭ್ರಾಂತಿಯ ದಿನ, ಕೋಟೆಕೊತ್ತಲಗಳನ್ನು ಹೊಡೆದುರುಳಿಸುವ ದಿನ. ಕೂಗಾಟವು ಬೆಟ್ಟದಲ್ಲಿ ಮಾರ್ದನಿಸುವ ದಿನ!</verse>
				<verse number="6">ಏಲಾಮಿನ ಸೈನಿಕರು ಬಿಲ್ಲುಬಾಣಗಳನ್ನೂ, ರಥಾಶ್ವಗಳನ್ನೂ ಸಜ್ಜುಗೊಳಿಸಿರುವರು. ಕೀರಿನವರು ಗುರಾಣಿಗಳನ್ನು ಅಣಿಗೊಳಿಸಿರುವರು.</verse>
				<verse number="7">ನಿಮ್ಮ ಫಲವತ್ತಾದ ತಗ್ಗುಪ್ರದೇಶಗಳು ರಥಗಳಿಂದ ತುಂಬಿರುವುವು. ಅಶ್ವದಳಗಳು ಪುರದ್ವಾರದ ಬಳಿ ಕಾವಲು ನಿಂತಿರುವುವು.</verse>
				<verse number="8">ಜುದೇಯದ ಕೋಟೆ ನೆಲಸಮವಾಯಿತು. ಆಗ ಲೆಬನೋನಿನ ವನಮಂದಿರದ ಕಡೆಗೆ ಕೈಚಾಚಿದಿರಿ.</verse>
				<verse number="9">ದಾವೀದನ ಕೋಟೆಯ ಬಿರುಕುಗಳು ಬಹಳವೆಂಬುದನ್ನು ಗಮನಿಸಿದಿರಿ. ಕೆಳಗಿನ ಕೊಳಕ್ಕೆ ನೀರನ್ನು ಹಾಯಿಸಿದಿರಿ.</verse>
				<verse number="10">ಜೆರುಸಲೇಮಿನ ಮನೆಗಳನ್ನು ಪರೀಕ್ಷಿಸಿದಿರಿ. ಕೋಟೆಯ ಗೋಡೆಗಳನ್ನು ಭದ್ರಪಡಿಸಲು ಆ ಮನೆಗಳನ್ನು ಕೆಡವಿಬಿಟ್ಟಿರಿ.</verse>
				<verse number="11">ಎರಡು ಗೋಡೆಗಳ ನಡುವೆ ಹಳೆಯ ಕೊಳದಿಂದ ಹರಿಯುವ ನೀರಿಗಾಗಿ ಜಲಾಶಯವನ್ನು ಕಟ್ಟಿದಿರಿ. ಆದರೆ ಪುರಾತನ ಕಾಲದಿಂದ ನಿಯೋಜಿಸಿ ಇದನ್ನೆಲ್ಲಾ ನಡೆಸಿದಾತನ ಕಡೆಗೆ ಗಮನ ಕೊಡದೆಹೋದಿರಿ.</verse>
				<verse number="12">ಎಂದೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆ ದಿನದಂದು ನಿಮಗೆ ಆಜ್ಞಾಪಿಸಿ: “ನೀವು ಅತ್ತು ಪ್ರಲಾಪಿಸಬೇಕು, ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು,” ಎಂದು ಹೇಳಿದರು.</verse>
				<verse number="13">ಆದರೆ ನೀವು ಹರ್ಷಾನಂದಗೊಂಡಿರಿ. ದನಕರುಗಳನ್ನು ಕೊಯ್ದಿರಿ, ಮಾಂಸವನ್ನು ಭುಜಿಸಿ ಮದ್ಯಪಾನ ಮಾಡಿದಿರಿ. “ಇಂದೇ ತಿಂದು ಕುಡಿಯೋಣ, ನಾಳೆ ಬರುತ್ತದೆ ಮರಣ,” ಎಂದು ಹೇಳಿಕೊಂಡಿರಿ.</verse>
				<verse number="14">ಇಂತಿರಲು, ಸೇನಾಧೀಶ್ವರ ಸರ್ವೇಶ್ವರ ನನ್ನ ಕಿವಿಯಲ್ಲಿ ಉಸುರಿದ್ದೇನೆಂದರೆ: “ಇವರು ಸಾಯುವತನಕ ಇವರಿಗೆ ಪಾಪಕ್ಷಮೆ ದೊರಕುವುದಿಲ್ಲ. ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯಾದ ನಾನೇ ಇದನ್ನು ನುಡಿದಿದ್ದೇನೆ.”</verse>
				<verse number="15">ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಹೀಗೆ ನುಡಿದಿದ್ದಾರೆ: “ಹೋಗು, ಅರಮನೆಯ ಮೇಲ್ವಿಚಾರಕ ಶೆಬ್ನ ಎಂಬ ಅಧ್ಯಕ್ಷನಿಗೆ ಹೀಗೆಂದು ಹೇಳು:</verse>
				<verse number="16">ನಿನಗೇನು ಕೆಲಸವಿಲ್ಲಿ? ನಿನಗಾರಿಹರಿಲ್ಲಿ? ತೋಡಿಸಿಕೊಂಡಿರುವೆಯಾ ಗೂಡನ್ನಿಲ್ಲಿ? ಗೋರಿಯನ್ನು ಕೊರೆಯಿಸಿಕೊಂಡಿರುವೆಯಾ ಎತ್ತರದ ಬಂಡೆಯಲ್ಲಿ? ಕೆತ್ತಿಸಿಕೊಂಡಿರುವೆಯಾ ನಿನಗೊಂದು ನಿವಾಸವನಿಲ್ಲಿ?</verse>
				<verse number="17">ಎಲೈ ಬಲಾಢ್ಯನೇ, ಸರ್ವೇಶ್ವರ ನಿನ್ನನ್ನು ಬಿಗಿಹಿಡಿದು ದೂರಕ್ಕೆಸೆಯುವರು,</verse>
				<verse number="18">ಚೆಂಡಿನಂತೆ ಉಂಡೆ ಮಾಡಿ ನಿನ್ನನ್ನು ಗಿರ್ರನೆ ಸುತ್ತಿಸಿ ವಿಸ್ತಾರವಾದ ಬಯಲಿಗೆ ಬಿಸಾಡುವರು. ದಣಿಯ ಮನೆಗೆ ಅಪಮಾನ ತಂದವನೇ, ನೀನು ಸಾಯುವುದು ಅಲ್ಲೇ.</verse>
				<verse number="19">ನಿನ್ನನ್ನು ಕೆಲಸದಿಂದ ತೆಗೆದುಬಿಡುವರು, ನಿನ್ನ ಪದವಿಯಿಂದ ತೆಗೆದುಹಾಕುವರು.</verse>
				<verse number="20">“ಆ ದಿನದಂದು, ನನ್ನ ದಾಸನೂ ಹಿಲ್ಕಿಯನ ಮಗನೂ ಆದ ಎಲ್ಯಾಕೀಮನನ್ನು ಬರಮಾಡುವೆನು.</verse>
				<verse number="21">ನಿನ್ನ ವಸ್ತ್ರವನ್ನು ಅವನಿಗೆ ತೊಡಿಸುವೆನು. ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟುವೆನು. ನಿನ್ನ ಅಧಿಕಾರವನ್ನು ಅವನಿಗೆ ಒಪ್ಪಿಸುವೆನು. ಅವನು ಜೆರುಸಲೇಮಿನ ನಿವಾಸಿಗಳಿಗೂ ಜುದೇಯದ ಮನೆತನಕ್ಕೂ ತಂದೆಯಾಗಿರುವನು.</verse>
				<verse number="22">ದಾವೀದ ಮನೆತನದ ಅಧಿಕಾರವನ್ನು ಅವನ ಹೆಗಲ ಮೇಲೆ ಹೊರಿಸುವೆನು. ಅವನು ತೆರೆದ ಬಾಗಿಲನ್ನು ಯಾರೂ ಮುಚ್ಚರು; ಅವನು ಮುಚ್ಚಿದ ಬಾಗಿಲನ್ನು ಯಾರೂ ತೆರೆಯರು.</verse>
				<verse number="23">ವಸ್ತುಗಳನ್ನು ತಗುಲಿಹಾಕುವ ಮೊಳೆಯಂತೆ ಗಟ್ಟಿಯಾದ ಸ್ಥಳದಲ್ಲಿ ಅವನನ್ನು ಬಿಗಿಯಾಗಿ ನಿಲ್ಲಿಸುವೆನು. ಅಲ್ಲದೆ, ಅವನು ತನ್ನ ವಂಶದವರಿಗೆ ಗೌರವಪೀಠವಾಗಿರುವನು.”</verse>
				<verse number="24">“ಬಟ್ಟಲು, ಬಿಂದಿಗೆ ಮುಂತಾದ ಪಾತ್ರೆಗಳನ್ನು ಮೊಳೆಗೆ ತಗಲುಹಾಕುವಂತೆ, ತಂದೆಯ ಮಕ್ಕಳು, ಮೊಮ್ಮಕ್ಕಳೆಲ್ಲರು ಅವನಿಗೆ ನೇತುಬೀಳುವರು.</verse>
				<verse number="25">ಇದರಿಂದ ಬಿಗಿಯಾಗಿ ಹೊಡೆಯಲಾಗಿದ್ದ ಆ ಮೊಳೆ ಸಡಿಲವಾಗಿ ಕುಸಿದುಬೀಳುವುದು. ಅದಕ್ಕೆ ತಗಲುಹಾಕಿದ್ದ ವಸ್ತುಗಳೆಲ್ಲ ಕಳಚಿಬೀಳುವುವು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಹೇಳಿರುವರು.</verse>
			</chapter>
			<chapter number="23">
				<verse number="1">ಟೈರ್ ನಗರವನ್ನು ಕುರಿತ ದೈವೋಕ್ತಿ: “ಗೋಳಾಡಿರಿ ತಾರ್ಷಿಷಿನ ನಾವಿಕರೆಲ್ಲ, ಹಾಳಾಗಿವೆ ನಿಮ್ಮ ಬಂದರುಗಳೆಲ್ಲ; ಹಡಗುಗಳಿಗೆ ರೇವಿಲ್ಲ, ನೆಲೆಯಿಲ್ಲ, ಸೈಪ್ರಸ್ಸಿನಿಂದ ಬಂದ ನಾವಿಕರಿಂದ ಈ ಸುದ್ದಿ ನಿಮಗೆ ತಿಳಿಯುವುದು.”</verse>
				<verse number="2">ಕರಾವಳಿಯ ನಿವಾಸಿಗಳೇ, ಸಿದೋನಿನ ವರ್ತಕರೇ, ಮೌನತಾಳಿರಿ. ನಿಮ್ಮ ಜನರು ವ್ಯಾಪಾರಕ್ಕಾಗಿ ವಿಶಾಲವಾದ ಸಮುದ್ರವನ್ನು ದಾಟುವಂತೆ ಮಾಡಿದಿರಿ.</verse>
				<verse number="3">ಶೀಹೋರಿನ ಧಾನ್ಯದಿಂದಲೂ ನೈಲಿನ ಬೆಳೆಯಿಂದಲೂ ಆದಾಯ ಪಡೆದಿರಿ, ನಿಮ್ಮ ನಗರ ಹಲವಾರು ನಾಡುಗಳಿಗೆ ಮಾರುಕಟ್ಟೆಯಾಗಿತ್ತು.</verse>
				<verse number="4">ಸಿದೋನ್ ನಗರವೇ, ನಿನಗೆ ನಾಚಿಕೆಗೇಡು! ಸಮುದ್ರವೂ ಸಮುದ್ರ ತಳವೂ ನಿನ್ನನ್ನು ನಿರಾಕರಿಸುತ್ತಾ; “ನಾನು ಗರ್ಭಧರಿಸಲಿಲ್ಲ, ಪ್ರಸವಿಸಲಿಲ್ಲ, ಪುತ್ರಪುತ್ರಿಯರನ್ನು ಸಾಕಿ ಸಲಹಲಿಲ್ಲ,” ಎಂದು ನುಡಿದಿದೆ.</verse>
				<verse number="5">ಟೈರಿನ ದುರ್ಗತಿಯ ಸುದ್ದಿಯನ್ನು ಕೇಳಿದ ಈಜಿಪ್ಟಿನವರು ಸಹ ಕಳವಳಪಡುವರು.</verse>
				<verse number="6">ಕರಾವಳಿಯ ನಿವಾಸಿಗಳೇ, ಗೋಳಾಡಿರಿ, ಸಮುದ್ರವನ್ನು ದಾಟಿ ತಾರ್ಷೀಷಿಗೆ ಹೋಗಿರಿ.</verse>
				<verse number="7">ಇದು ತಾನೋ, ನಿಮ್ಮ ವಸಾಹತುಗಳನ್ನು ನಿರ್ಮಿಸಿಕೊಳ್ಳಲು ಜನರನ್ನು ಕಳುಹಿಸಿದ ನಗರ! ಇದರ ವರ್ತಕರು ಪ್ರಭುಗಳು!</verse>
				<verse number="8">ಇದರ ವ್ಯಾಪಾರಿಗಳು ವಿಶ್ವವಿಖ್ಯಾತರು. ಇಂಥ ಟೈರ್ ಪಟ್ಟಣಕ್ಕೆ ನಾಶವೊದಗಿದುದನ್ನು ಯೋಚಿಸಿದವರಾರು?</verse>
				<verse number="9">ಇದು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಸಂಕಲ್ಪವೇ ಸರಿ. ಗರ್ವಿಗಳ ಸಕಲ ದರ್ಪವನ್ನು ದಮನಮಾಡಲು, ವಿಶ್ವವಿಖ್ಯಾತರನ್ನು ಅವಮಾನಗೊಳಿಸಲು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಯೋಜನೆಯಿದು.</verse>
				<verse number="10">ತಾರ್ಷೀಷ್ ನಗರವೇ, ನೈಲ್ ನದಿಯಂತೆ ನಿನ್ನ ನಾಡನ್ನು ಕೃಷಿಮಾಡು. ನಿನಗೆ ಬಂದರು ಇಲ್ಲವೇ ಇಲ್ಲ.</verse>
				<verse number="11">ಸರ್ವೇಶ್ವರ ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾರೆ. ಕಾನಾನಿನ ದುರ್ಗಗಳನ್ನು ನಾಶಮಾಡಲು ಅಪ್ಪಣೆಕೊಟ್ಟಿದ್ದಾರೆ.</verse>
				<verse number="12">“ಹಿಂಸೆಗೆ ಈಡಾದ ಕನ್ಯೆಯಂತೆ ಇರುವ ಸಿದೋನ್ ನಗರವೇ, ಇನ್ನು ಮೇಲೆ ನಿನಗಿರದು ಸಂತೃಪ್ತಿ: ಸಮುದ್ರ ದಾಟಿ ಸೈಪ್ರಸ್ಸಿಗೆ ಹಾದುಹೋಗು, ಅಲ್ಲಿಯೂ ನಿನಗೆ ದೊರಕದು ವಿಶ್ರಾಂತಿ,” ಎಂದು ಹೇಳಿದ್ದಾರೆ.</verse>
				<verse number="13">ಬಾಬಿಲೋನಿನ ನಾಡನ್ನು ನೋಡು. ಅದರ ಜನಾಂಗ ನಿರ್ನಾಮವಾಯಿತು. ಅಸ್ಸೀರಿಯದವರು ಆ ನಾಡನ್ನು ಕಾಡುಮೃಗಗಳಿಗೆ ಈಡುಮಾಡಿದರು. ಅಲ್ಲಿ ಬುರುಜುಗಳನ್ನು ಕಟ್ಟಿಕೊಂಡರು. ಇದರ ಕೋಟೆಗಳನ್ನಾದರೋ ಕೆಡವಿ ನಾಶಮಾಡಿದರು.</verse>
				<verse number="14">‘ಗೋಳಾಡಿರಿ, ತಾರ್ಷೀಷಿನ ನಾವಿಕರೆಲ್ಲರು; ಹಾಳಾಗಿವೆ ನಿಮ್ಮ ಬಂದರುಗಳೆಲ್ಲವು.’</verse>
				<verse number="15">ಒಬ್ಬ ಅರಸನ ಜೀವಮಾನ ಕಾಲದಷ್ಟು ದಿನ - ಅಂದರೆ ಎಪ್ಪತ್ತು ವರ್ಷಕಾಲ - ನಗರವು ಯಾರ ನೆನಪಿಗೂ ಬಾರದೆಹೋಗುವುದು. ಆ ಅವಧಿಯು ಮುಗಿದ ಮೇಲೆ ಅದರ ಗತಿ ವೇಶ್ಯೆಯ ಗೀತದಂತಾಗುವುದು:</verse>
				<verse number="16">‘ಓ ವೇಶ್ಯೆಯೇ, ಮರೆತಿಹರು, ನೋಡು, ಜನರು ನಿನ್ನನು; ಎಂದೇ ತೆಗೆದುಕೋ ಕೈಯಲಿ ಕಿನ್ನರಿಯನು: ನುಡಿಸು ಇಂಪಾಗಿ ನಿನ್ನ ವಾದ್ಯವನು; ಹಾಡು ಅನೇಕಾನೇಕ ಗೀತಗಳನು; ಆಗಲಾದರೂ ನೆನಸಿಕೊಳ್ಳಲಿ ಜನರು ನಿನ್ನನು.’</verse>
				<verse number="17">ಎಪ್ಪತ್ತು ವರ್ಷಗಳಾದ ಮೇಲೆ ಸರ್ವೇಶ್ವರ ಟೈರಿಗೆ ಭೇಟಿನೀಡುವರು. ಆ ನಗರಿ ತನ್ನ ಕಸುಬಿಗೆ ಹಿಂದಿರುಗುವಳು. ಜಗದ ಎಲ್ಲ ರಾಷ್ಟ್ರಗಳೊಂದಿಗೆ ವ್ಯಾಪಾರ ಗೈಯುವಳು.</verse>
				<verse number="18">ಅವಳ ವ್ಯಾಪಾರದಿಂದ ಬಂದ ಆದಾಯ ಅವಳಿಗೆ ನಿಧಿನಿಕ್ಷೇಪವಾಗದೆ ಸರ್ವೇಶ್ವರ ಸ್ವಾಮಿಗೆ ಮೀಸಲಾಗುವುದು. ಅದು ಸರ್ವೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ವಾಸಮಾಡುವವರಿಗೆ ಬೇಕಾದಷ್ಟು ಆಹಾರವನ್ನೂ ಅತ್ಯುತ್ತಮವಾದ ಉಡುಪನ್ನೂ ಒದಗಿಸುವುದು.</verse>
			</chapter>
			<chapter number="24">
				<verse number="1">ಇಗೋ, ಸರ್ವೇಶ್ವರ ಬರಿದುಮಾಡುವರು ಧರೆಯನು, ನಿರ್ಜನ ಪ್ರದೇಶವಾಗಿಸುವರು ವಿರೂಪಗೊಳಿಸಿ ಅದನು, ಚದರಿಸುವರು ಅದರ ನಿವಾಸಿಗಳನು.</verse>
				<verse number="2">ಪ್ರಜೆಗೆ ಹೇಗೋ ಹಾಗೆ ಯಾಜಕನಿಗೆ, ದಾಸನಿಗೆ ಹೇಗೋ ಹಾಗೆ ದಣಿಗೆ, ದಾಸಿಗೆ ಹೇಗೋ ಹಾಗೆ ಯಜಮಾನಿಗೆ, ಕೊಳ್ಳುವವನಿಗೆ ಹೇಗೋ ಹಾಗೆ ಕೊಡುವವನಿಗೆ, ಸಾಲ ಕೊಡುವವನಿಗೆ ಹೇಗೋ ಹಾಗೆ ಸಾಲ ಪಡೆಯುವವನಿಗೆ, ಬಡ್ಡಿ ತೆಗೆಯುವವನಿಗೆ ಹೇಗೋ ಹಾಗೆ ಬಡ್ಡಿ ತೆರುವವನಿಗೆ, ಬರುವುದು ಒಂದೇ ಗತಿ ಇವರೆಲ್ಲರಿಗೆ.</verse>
				<verse number="3">ಬೆಟ್ಟ ಬರಿದಾಗಿ ಸಂಪೂರ್ಣ ಸುಲಿಗೆಯಾಗುವುದು ಜಗವು, ಸರ್ವೇಶ್ವರ ಸ್ವಾಮಿಯ ನುಡಿಗಳಿವು:</verse>
				<verse number="4">ಸೊರಗಿಹೋಗುವುದು ಲೋಕ ದುಃಖಿಸುತ್ತಾ ಕುಗ್ಗಿಹೋಗುವುದು ಬುವಿ ಗೋಳಾಡುತ್ತಾ ಕಂಗೆಟ್ಟುಹೋಗುವನು ಪ್ರತಿಯೊಬ್ಬ ವಿಶ್ವವಿಖ್ಯಾತ.</verse>
				<verse number="5">ಭೂನಿವಾಸಿಗಳು ಮೀರಿಹರು ದೈವಾಜ್ಞೆಗಳನು ಉಲ್ಲಂಘಿಸಿಹರು ದೈವನಿಯಮಗಳನು, ಭಂಗಪಡಿಸಿಹರು ಶಾಶ್ವತ ಒಡಂಬಡಿಕೆಯನ್ನು, ಮಲಿನವಾಗಿಸಿಹರು ನಡತೆಯಿಂದ ಲೋಕವನು.</verse>
				<verse number="6">ಇದಕಾರಣ ಕಬಳಿಸಿದೆ ಜಗವನು ಶಾಪ, ತಟ್ಟಿದೆ ಆ ಜನರಿಗೆ ದಂಡನೆಯ ತಾಪ. ಸುಟ್ಟಮೇಲೆ ಉಳಿದಿಹರು ಅವರಲಿ ಕೆಲವರು ಮಾತ್ರ.</verse>
				<verse number="7">ಬಾಡಿಹೋಗಿದೆ ದ್ರಾಕ್ಷಾಲತೆ, ದುಬಾರಿಯಾಗಿದೆ ದ್ರಾಕ್ಷಾರಸ, ನರಳುತಿದೆ ನಲಿಯುತ್ತಿದ್ದ ಜನಸಮೂಹ.</verse>
				<verse number="8">ನಿಂತುಹೋಗಿದೆ ದಮ್ಮಡಿಗಳ ಹರ್ಷನಾದ, ಕೊನೆಗೊಂಡಿದೆ ಉಲ್ಲಾಸಿಗಳ ಕೋಲಾಹಲ, ಅಡಗಿಹೋಗಿದೆ ಕಿನ್ನರಿಯ ಮಧುರಸ್ವರ.</verse>
				<verse number="9">ಇನ್ನಿಲ್ಲ ಮದ್ಯಪಾನ ಗೀತಾಗಾನ, ಕಹಿಪಾನವಾಯಿತು ಕುಡುಕನಿಗೆ ಸುರಾಪಾನ.</verse>
				<verse number="10">ಪಾಳುಬಿದ್ದಿದೆ ಅಸ್ತವ್ಯಸ್ತವಾದ ನಗರ, ಯಾರೂ ಪ್ರವೇಶಿಸದಂತೆ ಮುಚ್ಚಿದೆ ಪ್ರತಿಯೊಂದು ಗೃಹ.</verse>
				<verse number="11">ಮದ್ಯಪಾನವಿಲ್ಲವೆಂದು ಬೀದಿಗಳಲಿ ಬೊಬ್ಬೆ ಇಡುತಿಹರೆಲ್ಲ, ಅಸ್ತಮಿಸಿಹೋಯಿತು ಜಗದ ಉಲ್ಲಾಸವೆಲ್ಲ, ಸೆರೆಯಾಗಿ ತೊಲಗಿತು ಅದರ ಸಡಗರವೆಲ್ಲ.</verse>
				<verse number="12">ಪಾಳುಬಿದ್ದಿದೆ ನಗರ, ಮುರಿದು ಬಿದ್ದಿದೆ ಪುರದ್ವಾರ.</verse>
				<verse number="13">ಉಳಿಯುವುವು ಜನಾಂಗಗಳು ಜಗದ ಮಧ್ಯೆ, ಎಣ್ಣೆಯ ಬೀಜವನು ಉದುರಿಸಿದ ಮೇಲೆ ಮಿಗುವ ಹೀಚಿನಂತೆ, ದ್ರಾಕ್ಷಿ ಹಣ್ಣನು ಕೊಯ್ದ ಮೇಲೆ ಉಳಿದ ಕೂಳೆಯಂತೆ.</verse>
				<verse number="14">ಆರ್ಭಟಿಸುವರು ಅಳಿದುಳಿದವರು ಆನಂದದಿಂದ, ಕೊಂಡಾಡುವರು ಸರ್ವೇಶ್ವರನ ಮಹಿಮೆಯನು ಪಡುವಣದಿಂದ,</verse>
				<verse number="15">ಎಂದೇ ಮೂಡಣದವರೇ, ಸನ್ಮಾನಿಸಿರಿ ಸರ್ವೇಶ್ವರ ಸ್ವಾಮಿಯನು, ಕರಾವಳಿಯವರೇ, ಘನಪಡಿಸಿರಿ ಇಸ್ರಯೇಲಿನ ದೇವರಾದ ಸ್ವಾಮಿಯ ನಾಮವನು.</verse>
				<verse number="16">ಜಗದ ಕಟ್ಟಕಡೆಯಿಂದ ಕೇಳಿಬರುತಿದೆ, ‘ಸತ್ಯಸ್ವರೂಪನಿಗೆ ಸ್ತೋತ್ರ’ ಎಂಬ ಗೀತೆ. ಆದರೆ ನಶಿಸಿಹೋಗುತ್ತಿರುವೆನು ನಾನು, ಹೌದು, ನಶಿಸಿ ನಾಶವಾಗುತ್ತಿರುವೆನು, ಏನೆಂದು ಹೇಳಲಿ ನನ್ನ ಗತಿಯನು. ಇದೋ, ಬಾಧಿಸುತ್ತಿಹರು ದ್ರೋಹಿಗಳು, ದ್ರೋಹದ ಮೇಲೆ ದ್ರೋಹವೆಸಗುತಿಹರು.</verse>
				<verse number="17">ಎಲೈ ಭೂನಿವಾಸಿಗಳೇ, ಕೇಳಿರೆಲ್ಲರು, ಕಾದಿದೆ ನಿಮಗೆ ಭಯಭೀತಿ, ಕುಳಿ ಮತ್ತು ಬಲೆಯು.</verse>
				<verse number="18">ಬೀಳುವನು ಕುಳಿಯಲ್ಲಿ, ಭಯಭೀತಿಯ ಸಪ್ಪಳಕ್ಕೆ ಓಡಿಹೋಗುವವನು, ಸಿಕ್ಕಿಬೀಳುವನು ಬಲೆಯಲ್ಲಿ ಕುಳಿಯ ಹತ್ತಿ ಬರುವವನು. ತೆರೆದಿವೆ ನೋಡಿ, ಆಕಾಶದ ದ್ವಾರಗಳು, ಕಂಪಿಸುತ್ತಿವೆ ಬುವಿಯ ಅಸ್ತಿವಾರಗಳು.</verse>
				<verse number="19">ಬಿರುಕು ಬಿಡುವುದು ಭೂಮಿ ಸೀಳುಪಾಳಾಗಿ ಕತ್ತರಿಸುವುದು ಕದಲಿಹೋಗಿ.</verse>
				<verse number="20">ಓಲಾಡುವುದು ಭೂಮಿ ಅಮಲೇರಿದವನಂತೆ, ತೂಗಾಡುವುದು ಬಿರುಗಾಳಿಗೆ ಸಿಕ್ಕಿದ ಗುಡಿಸಲಂತೆ, ಕುಸಿದು ಬೀಳುವುದು ದ್ರೋಹದ ಭಾರಕೆ, ಮರಳಿ ಏಳದಂತೆ.</verse>
				<verse number="21">ಆ ದಿನ ಸರ್ವೇಶ್ವರ ದಂಡಿಸುವರು ಮೇಲಣ ಸೇನಾಶೂರರನು, ಕೆಳಗಣ ಭೂ ರಾಜರನು.</verse>
				<verse number="22">ತಳ್ಳುವವರನು ಖೈದಿಗಳ ಗುಂಪಿನಂತೆ ನೆಲಮಾಳಿಗೆಗೆ, ಇರುವರವರು ಸೆರೆಯಲಿ ಬಹುದಿನಗಳವರೆಗೆ, ತದನಂತರ ಗುರಿಯಾಗುವರು ದಂಡನೆಗೆ.</verse>
				<verse number="23">ನಾಚುವನು ಚಂದ್ರ, ಹೇಸುವನು ಸೂರ್ಯ, ಏಕೆನೆ ಆಳುವರು ಸೇನಾಧೀಶ್ವರ ಸರ್ವೇಶ್ವರ ಸಿಯೋನ್ ಪರ್ವತದೊಳು, ಜೆರುಸಲೇಮ್ ನಗರದೊಳು. ಪ್ರತ್ಯಕ್ಷವಾಗುವುದಾತನ ಮಹಿಮಾಪ್ರಭಾವವು, ಅಲ್ಲಿನ ಜನನಾಯಕರ ಸಮ್ಮುಖದೊಳು.</verse>
			</chapter>
			<chapter number="25">
				<verse number="1">ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು.</verse>
				<verse number="2">ನಾಶಪಡಿಸಿದೆ ನೀ ನಗರವನು, ದಿಬ್ಬವಾಗಿಸಿದೆ ದುರ್ಗವನು, ಕೆಡವಿದೆ ವಿದೇಶೀಯರ ಕೋಟೆಯನು, ಮರಳಿ ಕಟ್ಟಲಾಗದ ಹಾಳೂರನ್ನಾಗಿಸಿದೆ ಅದನು.</verse>
				<verse number="3">ಹೊಗಳುವುವು ನಿನ್ನನ್ನು ಬಲಿಷ್ಟ ರಾಷ್ಟ್ರಗಳು, ನಿನಗಂಜುವುವು ಕ್ರೂರಿಗಳ ಪಟ್ಟಣಗಳು.</verse>
				<verse number="4">ದುರ್ಗವಾಗಿರುವೆ ನೀನು ದೀನದಲಿತರಿಗೆ, ಸುರಕ್ಷಿತ ಕೋಟೆಯಾಗಿರುವೆ ದಟ್ಟದರಿದ್ರರಿಗೆ, ನೆರಳಾಗಿರುವೆ ಬಿಸಿಲೊಳು ಬೆಂದವರಿಗೆ. ಕ್ರೂರಿಗಳ ಹೊಡೆತ ಚಳಿಗಾಲದ ಚಂಡಮಾರುತವಾಗಿರೆ, ಬಿರುಗಾಳಿಯ ಆ ಬಡಿತಕೆ ನೀನಾದೆ ಆಸರೆ.</verse>
				<verse number="5">ಅನ್ಯರ ಆರ್ಭಟವನು ನೀ ಅಡಗಿಸುವೆ, ಸುಡುವ ಒಣ ನೆಲವನು ಮೇಘ ತಣಿಸುವಂತೆ. ಕ್ರೂರಿಗಳ ಹರ್ಷೋದ್ಗಾರವನು ನಿಲ್ಲಿಸುವೆ, ಬಿಸಿಲನು ತಡೆಯುವ ಮೋಡದ ನೆರಳಿನಂತೆ.</verse>
				<verse number="6">ಇದಲ್ಲದೆ ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು.</verse>
				<verse number="7">ಸಮಸ್ತ ರಾಷ್ಟ್ರಗಳನ್ನು ಆವರಿಸಿರುವ ಮುಸುಕನ್ನೂ ಸಕಲ ದೇಶಗಳನ್ನು ಮುಚ್ಚಿರುವ ತೆರೆಯನ್ನೂ ಇದೇ ಪರ್ವತದಲ್ಲಿ ನಾಶಮಾಡುವರು.</verse>
				<verse number="8">ಮರಣವನ್ನು ಶಾಶ್ವತವಾಗಿ ನಿರ್ನಾಮಮಾಡುವರು. ಸರ್ವೇಶ್ವರ ಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರ ಸ್ವಾಮಿಯೇ ಇಂತೆಂದು ನುಡಿದಿದ್ದಾರೆ.</verse>
				<verse number="9">ಇದು ನೆರವೇರಿದಾಗ ಜನರು: “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ!” ಎಂದು ಹೇಳಿಕೊಳ್ಳುವರು.</verse>
				<verse number="10">ಸರ್ವೇಶ್ವರ ಸ್ವಾಮಿಯ ಅಭಯ ಹಸ್ತವು ಈ ಪರ್ವತದ ಮೇಲೆ ಶಾಶ್ವತವಾಗಿ ನೆಲಸುವುದು. ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿತಕ್ಕೆ ಈಡಾಗುವಂತೆ ತಾನಿದ್ದಲ್ಲೇ ತುಳಿತಕ್ಕೀಡಾಗುವುದು.</verse>
				<verse number="11">ಈಜುವವರು ಕೈಯಾಡಿಸುವಂತೆ ಮೋವಾಬ್ ರೊಚ್ಚಿನಲ್ಲಿ ಕೈಯಾಡಿಸುವುದು. ಅದರ ಗರ್ವವನ್ನೂ ಕೈಚಳಕವನ್ನೂ ಸರ್ವೇಶ್ವರ ಸ್ವಾಮಿ ಅಡಗಿಸಿಬಿಡುವರು.</verse>
				<verse number="12">ದುರ್ಗದಂತೆ ಎತ್ತರವಾಗಿರುವ ಅದರ ಕೋಟೆಕೊತ್ತಲಗಳನ್ನು ಕೆಳಕ್ಕೆ ಕೆಡವಿ ನೆಲಸಮಮಾಡುವರು. ಅದು ಧೂಳು ಪಾಲಾಗುವುದು.</verse>
			</chapter>
			<chapter number="26">
				<verse number="1">ಕಾಲ ಬರುವುದು; ಆಗ ಹಾಡುವರು ಜುದೇಯ ನಾಡಿನಲ್ಲಿ ಈ ಗೀತೆಯನು: ನಮಗಿದೆ ಸುಭದ್ರ ನಗರ, ದೇವರೇ ಅದರ ದುರ್ಗ, ಪ್ರಾಕಾರ.</verse>
				<verse number="2">ತೆರೆಯಿರಿ ನಗರ ದ್ವಾರಗಳನು, ಪ್ರವೇಶಿಸಲಿ ವಿಶ್ವಾಸವುಳ್ಳ ಸಜ್ಜನರು.</verse>
				<verse number="3">ನಿನ್ನ ನೆಚ್ಚಿದವರಿಗೆ, ಸ್ಥಿರಚಿತ್ತವುಳ್ಳವರಿಗೆ, ಚಿರಶಾಂತಿಯ ನೀ ನೀಡುವೆ.</verse>
				<verse number="4">ಶಾಶ್ವತ ಆಶ್ರಯಗಿರಿ, ಸ್ವಾಮಿ ಸರ್ವೇಶ್ವರನೇ, ಸತತ ಭರವಸೆಯಿಡಿರಿ ಆತನಲ್ಲೇ.</verse>
				<verse number="5">ತಗ್ಗಿಸುವನಾತ ಎತ್ತರದಲಿ ವಾಸಿಸುವವರನು, ಕೆಡವಿ, ನೆಲಸಮಮಾಡಿ, ಧೂಳಾಗಿಸುವನು ಅವರು ವಾಸಮಾಡುವಾ ಉನ್ನತ ನಗರವನು.</verse>
				<verse number="6">ಈಡಾಗುವುದದು ಕಾಲತುಳಿತಕೆ ದೀನದಲಿತರ ಪಾದತುಳಿತಕೆ.</verse>
				<verse number="7">ನೇರವಾಗಿದೆ ಸಜ್ಜನನ ದಾರಿ ಸುಗಮವಾಗಿದೆ ನಿನ್ನಿಂದ ಆತನ ಹಾದಿ.</verse>
				<verse number="8">ನಡೆವೆವು ನಾವು, ಸರ್ವೇಶ್ವರಾ, ನಿನ್ನ ನೀತಿಮಾರ್ಗದೊಳು ಕಾದಿರುವೆವು ನಿನಗಾಗಿ ಭರವಸೆಯಿಟ್ಟು ನಿನ್ನೊಳು ನಿನ್ನ ನಾಮಸ್ಮರಣೆಯ ಬಯಕೆ ನಮ್ಮ ಅಂತರಾತ್ಮದೊಳು.</verse>
				<verse number="9">ಹಾರೈಸಿದೆ ಎನ್ನಾತ್ಮ ನಿನ್ನನು ಇರುಳೊಳು ಅರಸಿತೆನ್ನ ಮನ ನಿನ್ನನು ಮುಂಜಾನೆಯೊಳು. ನೀನೀಯುವಾಗ ಜಗಕೆ ನ್ಯಾಯತೀರ್ಪನು ಕಲಿತುಕೊಳ್ಳುವರು ಭೂನಿವಾಸಿಗಳು ನ್ಯಾಯನೀತಿಯನು.</verse>
				<verse number="10">ದಯೆತೋರಿದರೂ ಕಲಿಯನು ದುಷ್ಟನು ಆ ನ್ಯಾಯನೀತಿಯನು ಧರ್ಮಕ್ಷೇತ್ರದೊಳು ಸಹ ಗೈವನು ಅಕ್ರಮವನು ಗೌರವಿಸನು ಸರ್ವೇಶ್ವರನ ಮಹಿಮೆಯನು.</verse>
				<verse number="11">ಅವರ ಮೇಲೆ ನೀ ಕೈಯೆತ್ತಿದರೂ, ಸರ್ವೇಶ್ವರಾ, ಲಕ್ಷಿಸರವರು ನಿನ್ನನ್ನು. ನಾಚಲಿ ಅವರು ನೋಡಿ ನಿನ್ನ ಸ್ವಜನಾಭಿಮಾನವನು ದಹಿಸಿಬಿಡಲಿ ಅಗ್ನಿಜ್ವಾಲೆಯು ಆ ನಿನ್ನ ವಿರೋಧಿಗಳನು.</verse>
				<verse number="12">ಸರ್ವೇಶ್ವರಾ, ನೀಡೆಮಗೆ ಶಾಂತಿ ಸಮಾಧಾನ ನಮ್ಮ ಸತ್ಕಾರ್ಯಗಳೆಲ್ಲವೂ ನಿನ್ನ ಕೃಪಾಸಾಧನ.</verse>
				<verse number="13">ನಮ್ಮ ದೇವರಾದ ಸರ್ವೇಶ್ವರಾ, ಇಗೋ, ನೋಡು ನಮ್ಮನಾಳಿಹರು ಭೂರಾಜರು ನಿನ್ನ ಬಿಟ್ಟು, ಆದರೇನು, ಹೊಗಳುವೆವು ನಿನ್ನ ನಾಮವನೆ ಮುನ್ನಿಟ್ಟು.</verse>
				<verse number="14">ಮಡಿದುಹೋದರು ಆ ಒಡೆಯರೆಲ್ಲ ಮರಳಿ ಅವರ ಪ್ರೇತಗಳು ಎದ್ದುಬರುವಂತಿಲ್ಲ. ನೀನವರನು ಬಡಿದು ನಸುಕಿಹಾಕಿರುವೆ ಅವರ ನೆನಪನೆ ಅಳಿಸಿಹಾಕಿರುವೆ.</verse>
				<verse number="15">ಹೆಚ್ಚಿಸಿರುವೆ ಸರ್ವೇಶ್ವರಾ, ನಿನ್ನ ಜನರನು ಹೌದು, ವೃದ್ಧಿಗೊಳಿಸಿರುವೆ ನಿನ್ನ ಪ್ರಜೆಯನು. ವಿಸ್ತರಿಸಿರುವೆ ನಾಡಿನ ಮೇರೆಗಳನು ಈಪರಿ ಪಡೆದಿರುವೆ ಮಹಿಮೆಯನು.</verse>
				<verse number="16">ನಿನ್ನಾಶ್ರಯ ಕೋರಿದರು, ಸರ್ವೇಶ್ವರಾ, ಜನ ಇಕ್ಕಟ್ಟಿಗೆ ಸಿಕ್ಕಿದಾಗ ಪ್ರಾರ್ಥನೆ ಗೈದರವರು ನಿನ್ನ ಶಿಕ್ಷೆಗೆ ಗುರಿಯಾದಾಗ.</verse>
				<verse number="17">ಹೆರಿಗೆ ಹತ್ತಿರವಾದ ಗರ್ಭಿಣಿ ಚೀರುವಂತೆ ಯಾತನೆಪಡುವ ಬೇನೆಯಿಂದಾಕೆ ಅರಚುವಂತೆ ಮಾಡಿರುವೆ, ಸರ್ವೇಶ್ವರಾ, ನಿನಗಾಗಿ ನಾವು ಮೊರೆಯಿಡುವಂತೆ.</verse>
				<verse number="18">ಪ್ರಸವವೇದನೆಪಟ್ಟು ನಾವು ಹಡೆದದ್ದು ಗಾಳಿಯನ್ನೆ ಆಗಲಿಲ್ಲ ಜಗಕೆ ನಮ್ಮಿಂದ ಯಾವ ರಕ್ಷಣೆ ನೀಡಲಿಲ್ಲ ನಾವು ಜನ್ಮ ಲೋಕನಿವಾಸಿಗಳಿಗೆ.</verse>
				<verse number="19">ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.</verse>
				<verse number="20">ನನ್ನ ಜನರೇ, ಹೋಗಿ; ನಿಮ್ಮ ನಿಮ್ಮ ಮನೆಗಳನ್ನು ಸೇರಿ ಬಾಗಿಲು ಮುಚ್ಚಿಕೊಳ್ಳಿ. ದೇವರ ಕೋಪ ತೀರುವತನಕ ಕೊಂಚಕಾಲ ಅವಿತುಕೊಳ್ಳಿ.</verse>
				<verse number="21">ಇಗೋ, ಸರ್ವೇಶ್ವರ ಜಗದ ಜನಕ್ಕೆ ಅವರವರ ಪಾಪದ ಫಲವನ್ನು ಉಣಿಸಲು ತಮ್ಮ ನಿವಾಸದಿಂದ ಹೊರಟಿರುವರು. ಭೂಮಿ ತನ್ನಲ್ಲಿ ಇಂಗಿದ ರಕ್ತವನ್ನು ಬೆಳಕಿಗೆ ತರುವುದು; ಭೂನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಚದು.</verse>
			</chapter>
			<chapter number="27">
				<verse number="1">ಆ ದಿನದಂದು ಸರ್ವೇಶ್ವರ ಸ್ವಾಮಿ ತಮ್ಮ ಘೋರವಾದ, ಕ್ರೂರವಾದ, ಮಾರಕವಾದ ಖಡ್ಗದಿಂದ ವೇಗವಾಗಿ ಧಾವಿಸುವ ಹಾಗೂ ಡೊಂಕಾಗಿ ಹರಿಯುವ ಸರ್ಪವನ್ನು ಹೊಡೆಯುವರು. ಮಹಾನದಿಯಲ್ಲಿನ ಘಟಸರ್ಪವನ್ನು ಸಹ ಕೊಂದುಹಾಕುವರು.</verse>
				<verse number="2">ಆ ದಿನದಲ್ಲಿ ಪೇಳ್ವರು ಸರ್ವೇಶ್ವರ: “ಇಗೋ, ನನ್ನ ವಿಹಾರದ ದ್ರಾಕ್ಷಾವನ, ಇದ ಕುರಿತು ಹಾಡಿರಿ ಒಂದು ಗಾನ.</verse>
				<verse number="3">ಸರ್ವೇಶ್ವರನಾದ ನಾನೇ ಇದರ ತೋಟಗಾರ, ಕ್ಷಣಕ್ಷಣಕ್ಕೂ ಇದಕೆ ಹೊಯ್ಯುವೆ ನೀರ, ಇದನ್ನಾದರೂ ಮುಟ್ಟದಂತೆ ಕಾಯುವೆ ನಿರಂತರ.</verse>
				<verse number="4">ಇದರ ಬಗ್ಗೆ ನನಗೆ ಇನ್ನಿಲ್ಲ ರೌದ್ರ, ಇದರೊಳಗಿಲ್ಲ ಮುಳ್ಳುಕಳ್ಳಿಗಳ ಗಹ್ವರ, ಇದ್ದಿದ್ದರೆ ಸುಟ್ಟು ಭಸ್ಮ ಮಾಡುತ್ತಿದ್ದೆ ಹೂಡಿ ಸಮರ.</verse>
				<verse number="5">ಬೇಡವಾದರೆ ಆ ವೈರಿಗಳು ಶರಣಾಗತರಾಗಲಿ, ಬರಲಿ ನನ್ನ ಸಂಗಡ ಸಂಧಾನಕೆ, ಹೌದು, ಬರಲಿ ನನ್ನೊಡನೆ ಸಂಧಾನಕೆ.</verse>
				<verse number="6">ಮುಂಬರುವ ಕಾಲದಲಿ ಬೇರೂರುವುದು ಯಕೋಬ ಸಂತಾನ. ಚಿಗುರಿ ಹೂ ಬಿಡುವುದು ಇಸ್ರಯೇಲ್ ಮನೆತನ, ಆ ವೃಕ್ಷಫಲದಿಂದ ತುಂಬಿರುವುದು ಜಗದೆಲ್ಲ ಜನ.</verse>
				<verse number="7">ಸರ್ವೇಶ್ವರ ತಮ್ಮ ಪ್ರಜೆಯ ಘಾತುಕರನ್ನು ದಂಡಿಸಿದಷ್ಟು ತಮ್ಮ ಪ್ರಜೆಯನ್ನು ದಂಡಿಸಲಿಲ್ಲ. ಘಾತುಕರಿಗಾದ ಪ್ರಾಣನಷ್ಟ ತಮ್ಮ ಪ್ರಜೆಗೆ ಆಗಲಿಲ್ಲ.</verse>
				<verse number="8">ಆದರೂ ಸರ್ವೇಶ್ವರ ತಮ್ಮ ಪ್ರಜೆಗೆ ಗಡೀಪಾರು ಶಿಕ್ಷೆಯನ್ನು ವಿಧಿಸಿದರು. ದೂರದ ಮೂಡಣ ಬಿರುಗಾಳಿಯ ಬಡಿತಕ್ಕೆ ಗುರಿಮಾಡಿ ಅವರನ್ನು ತೊಲಗಿಸಿದರು.</verse>
				<verse number="9">ಇಂತಿರಲು ಯಕೋಬ್ಯರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗಬೇಕಾದರೆ, ಅವರ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲ ದೊರಕಬೇಕಾದರೆ, ಅವರ ವಿಗ್ರಹಾರಾಧಕ ಬಲಿಪೀಠದ ಕಲ್ಲುಗಳೆಲ್ಲ ಸುಣ್ಣದಂತೆ ಪುಡಿಪುಡಿ ಆಗಬೇಕು; ಆಶೇರಾ ಎಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಪ್ರತಿಷ್ಠಾಪಿಸುವುದು ಇನ್ನು ನಿಲ್ಲಬೇಕು.</verse>
				<verse number="10">ಕೋಟೆಕೊತ್ತಲಗಳಿಂದ ಕೂಡಿದ ಪಟ್ಟಣ ಪಾಳುಬಿದ್ದಿದೆ; ಕಾಡಿನಂತೆ ನಿರ್ಜನಪ್ರದೇಶವಾಗಿದೆ. ದನಕರುಗಳು ಮೇದು ಮಲಗುವ ಗೋಮಾಳವಾಗಿದೆ.</verse>
				<verse number="11">ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.</verse>
				<verse number="12">ಇಸ್ರಯೇಲಿನ ಜನರೇ, ದಿನವು ಬರಲಿದೆ. ಆಗ ಯೂಫ್ರೆಟಿಸ್ ನದಿಯಿಂದ ಈಜಿಪ್ಟ್ ದೇಶದ ನದಿಯವರೆಗೆ, ಸರ್ವೇಶ್ವರ ತೆನೆಗಳನ್ನು ಒಕ್ಕಣೆಮಾಡುವರು. ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಬೇರ್ಪಡಿಸಿ ಆಯ್ಕೆಮಾಡುವರು.</verse>
				<verse number="13">ಆ ದಿನ ಬಂದಾಗ, ಮಹಾ ತುತೂರಿಯೊಂದನ್ನು ಊದಲಾಗುವುದು. ಗಡೀಪಾರಾಗಿ ಚದುರಿಹೋಗಿರುವ ಇಸ್ರಯೇಲರನ್ನು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ಕರೆಯಲಾಗುವುದು. ಅವರೆಲ್ಲರೂ ಜೆರುಸಲೇಮಿಗೆ ಬಂದು ಪವಿತ್ರಪರ್ವತದ ಮೇಲೆ ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳುವರು, ಆರಾಧನೆಮಾಡುವರು.</verse>
			</chapter>
			<chapter number="28">
				<verse number="1">ಕುಡುಕರಿಂದ ಕೂಡಿದ ಎಫ್ರಯಿಮಿನ ಕಿರೀಟದಂತಿರುವ ನಗರಕ್ಕೆ ಧಿಕ್ಕಾರ! ಒಮ್ಮೆ ಕುಡಿತಕ್ಕೆ ಸೋತು ಫಲವತ್ತಾದ ಕಣಿವೆಗೆ ಶ್ರೇಷ್ಠ ಶಿರೋಭೂಷಣವಾಗಿದ್ದು ಈಗ ಬಾಡಿಹೋಗುತ್ತಿರುವ ಆ ಹೂವಿಗೆ ಧಿಕ್ಕಾರ!</verse>
				<verse number="2">ಇದೋ, ಸರ್ವೇಶ್ವರ ಸ್ವಾಮಿ ಬಳಿ ಮಹಾ ಬಲಿಷ್ಠನೊಬ್ಬನು ಇದ್ದಾನೆ. ಆತನು ರಭಸವಾಗಿರುವ ಕಲ್ಮಳೆಯಂತೆ, ವಿನಾಶಕರವಾದ ಬಿರುಗಾಳಿಯಂತೆ, ಕೊಚ್ಚಿ ಹರಿಯುವ ತುಂಬು ಪ್ರವಾಹದಂತೆ ಬರುವನು. ಆ ನಗರ ನೆಲಕ್ಕೆ ಕುಸಿದುಬಿದ್ದು ನೆಲಸಮವಾಗುವಂತೆ ಮಾಡುವನು.</verse>
				<verse number="3">ಎಫ್ರಯಿಮಿನ ಕುಡುಕರ ಮಹಾಮುಕುಟದಂತಿರುವ ಆ ನಗರ ಕಾಲಿನ ತುಳಿತಕ್ಕೆ ಈಡಾಗುವುದು.</verse>
				<verse number="4">ಫಲವತ್ತಾದ ಕಣಿವೆಗೆ ಶ್ರೇಷ್ಠಶಿರೋಭೂಷಣವಾಗಿದ್ದು, ಈಗ ಬಾಡುತ್ತಿರುವ ಆ ನಗರ, ಹೂ ಕಾಲಕ್ಕೆ ಮುಂಚೆ ಮಾಗಿದ ಅಂಜೂರಕ್ಕೆ ಸಮಾನವಾಗುವುದು. ಆ ಹಣ್ಣನ್ನು ಕಂಡವರು ಕಿತ್ತ ಕೂಡಲೆ ತಿಂದುಬಿಡುವರು.</verse>
				<verse number="5">ಆ ದಿನದಂದು ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯೇ ಅಳಿದುಳಿದ ತಮ್ಮ ಜನರಿಗೆ ಅಂದದ ಕಿರೀಟ, ಸುಂದರ ಮುಕುಟವಾಗುವರು.</verse>
				<verse number="6">ಅವರು ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯನ್ನೂ ಊರಬಾಗಿಲ ಬಳಿ ಶತ್ರುಗಳನ್ನು ತಡೆಗಟ್ಟುವವರಿಗೆ ಶೌರ್ಯವನ್ನೂ ನೀಡುವರು.</verse>
				<verse number="7">ಯಾಜಕರು, ಪ್ರವಾದಿಗಳು ಮದ್ಯಪಾನದಿಂದ ಮತ್ತರಾಗಿದ್ದಾರೆ; ದ್ರಾಕ್ಷಾರಸದಿಂದ ಓಲಾಡುತ್ತಿದ್ದಾರೆ; ಕುಡಿತದಿಂದ ತೂರಾಡುತ್ತಿದ್ದಾರೆ. ದ್ರಾಕ್ಷಾರಸವೇ ಅವರನ್ನು ಮುಳುಗಿಸಿಬಿಟ್ಟಿದೆ. ಹೌದು, ಅವರು ಮದ್ಯದಲ್ಲಿ ತೇಲಾಡುತ್ತಿದ್ದಾರೆ. ದೈವದರ್ಶನವಾಗುತ್ತಿರುವಾಗಲೂ ಅವರು ಓಲಾಡುತ್ತಾರೆ.</verse>
				<verse number="8">ಅವರು ಕುಳಿತುಕೊಳ್ಳುವ ಮೇಜುಗಳ ಮೇಲೆಲ್ಲಾ ಹೊಲಸು ವಾಂತಿ! ಸ್ವಚ್ಛವಾದ ಸ್ಥಳವಂತೂ ಕೊಂಚವೂ ಇಲ್ಲ.</verse>
				<verse number="9">ಇವರು ನನ್ನನ್ನು ಕುರಿತು: “ಇವನ ಜ್ಞಾನೋಪದೇಶ ಯಾರಿಗೆ? ಇವನು ಸಾರುವ ಸಂದೇಶ ಯಾರಿಗೆ? ಮೊಲೆಬಿಟ್ಟ ಕೂಸುಗಳಿಗೋ? ಎದೆಬಿಟ್ಟ ಮಕ್ಕಳಿಗೋ?</verse>
				<verse number="10">ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ; ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ” ಎಂದು ಹರಟೆ ಕೊಚ್ಚಿಕೊಳ್ಳುತ್ತಾರೆ.</verse>
				<verse number="11">ನೀವು ನನಗೆ ಕಿವಿಗೊಡದೆಹೋದರೆ, ಸರ್ವೇಶ್ವರ ಅಪರಿಚಿತವಾದ ಅನ್ಯಭಾಷೆಯನ್ನು ಆಡುವ ಜನರ ಮುಖಾಂತರ ನಿಮಗೆ ಪಾಠಕಲಿಸುವರು.</verse>
				<verse number="12">“ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ: ಬಳಲಿದವರನ್ನು ವಿಶ್ರಮಗೊಳಿಸಿರಿ; ಇದೇ ನಿಮಗೆ ಅನುಕೂಲವಾದ ಉಪಶಮನ” ಎಂದು ದೇವರು ನಿಮಗೆ ಹೇಳಿದಾಗ, ನೀವು ಕೇಳದೆಹೋದಿರಿ.</verse>
				<verse number="13">ಆದುದರಿಂದಲೇ ಸರ್ವೇಶ್ವರ ನಿಮಗೆ;ಆಜ್ಞೆಯ ಮೇಲೆ ಅಜ್ಞೆ, ಸೂತ್ರದ ಮೇಲೆ ಸೂತ್ರ, ಅಲ್ಲಿ ಸ್ವಲ್ಪ, ಇಲ್ಲಿ ಸ್ವಲ್ಪ’ ಎಂದು ಹೇಳಿ ಪಾಠಕಲಿಸುವರು. ಆಗ ನೀವು ನಡೆ ನಡೆದೂ ಎಡವಿ ಬೀಳುವಿರಿ, ಗಾಯಗೊಳ್ಳುವಿರಿ. ಉರುಲಿಗೆ ಸಿಕ್ಕಿಬೀಳುವಿರಿ, ಬಂಧನಕ್ಕೊಳಗಾಗುವಿರಿ.</verse>
				<verse number="14">ಆದಕಾರಣ, ಜೆರುಸಲೇಮಿನ ಜನರನ್ನಾಳುವ ಧರ್ಮನಿಂದಕರೇ, ಸರ್ವೇಶ್ವರ ಸ್ವಾಮಿಯ ಮಾತನ್ನು ಕೇಳಿರಿ.</verse>
				<verse number="15">ನೀವು ನಿಮ್ಮನಿಮ್ಮೊಳಗೆ: “ಮೃತ್ಯುವಿನೊಂದಿಗೆ ಮುಚ್ಚಳಿಕೆ, ಪಾತಾಳದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ಮಹಾವಿಪತ್ತು ನಾಡನ್ನು ಹಾದುಹೋಗುವಾಗ, ಅದು ನಮ್ಮನ್ನು ಮುಟ್ಟದು. ನಾವು ಅಸತ್ಯವನ್ನು ಆಶ್ರಯಿಸಿಕೊಂಡಿದ್ದೇವೆ. ಮೋಸವನ್ನು ಮರೆಹೊಕ್ಕಿದ್ದೇವೆ” ಎಂದು ಕೊಚ್ಚಿಕೊಳ್ಳುತ್ತಿದ್ದೀರಿ.</verse>
				<verse number="16">ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ: ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.</verse>
				<verse number="17">ನ್ಯಾಯನೀತಿಯನ್ನು ಅದರ ಅಳತೆಗೋಲನ್ನಾಗಿಯೂ ಸತ್ಯಸಂಧತೆಯನ್ನು ಅದರ ಮಟ್ಟಗೋಲನ್ನಾಗಿಯೂ ಮಾಡುತ್ತೇನೆ. ನಿಮ್ಮ ಅಸತ್ಯದಆಶ್ರಯವನ್ನು ಕಲ್ಮಳೆ ಕೊಚ್ಚಿಕೊಂಡು ಹೋಗುವುದು. ಜಲಪ್ರವಾಹವು ನಿಮ್ಮ ಮೋಸದ ಆಸರೆಯನ್ನು ಮುಳುಗಿಸುವುದು.</verse>
				<verse number="18">ಮೃತ್ಯುವಿನೊಂದಿಗೆ ನೀವು ಮಾಡಿಕೊಂಡ ಒಪ್ಪಂದ ಬಿದ್ದುಹೋಗುವುದು. ಆ ಮಹಾವಿಪತ್ತು ನಾಡನ್ನು ಹಾದುಹೋಗುವಾಗ ನಿಮ್ಮನ್ನು ತುಳಿದುಹಾಕುವುದು.</verse>
				<verse number="19">ಅದು ಹಾದುಹೋಗುವಾಗಲೆಲ್ಲಾ ನಿಮ್ಮನ್ನು ಹಿಡಿದುಬಿಡುವುದು. ಪ್ರತಿದಿನವೂ ಹಗಲೂ ರಾತ್ರಿ ಅದು ಹಾದುಹೋಗುವುದು. ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.</verse>
				<verse number="20">ನೀವಾದರೋ ಕಾಲು ಚಾಚಲು ಚಾಪೆ ಸಾಲದವನಂತೆ, ಹೊದ್ದುಕೊಳ್ಳಲು ಕಂಬಳಿ ಸಾಲದವನಂತೆ ಇರುವಿರಿ.</verse>
				<verse number="21">ಒಮ್ಮೆ ಸರ್ವೇಶ್ವರ ಪೆರಾಚೀಮ್ ಬೆಟ್ಟದ ಮೇಲೆ ಎದ್ದಂತೆ ಏಳುವರು; ಗೊಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವರು. ಆಗ ಅಸಾಧಾರಣ ಕಾರ್ಯವೊಂದನ್ನು ನಡೆಸುವರು; ಅಪೂರ್ವವಾದ ತಮ್ಮ ಕೆಲಸವನ್ನು ನೆರವೇರಿಸುವರು;</verse>
				<verse number="22">ಆದಕಾರಣ, ನಿಮ್ಮ ಬಂಧನಗಳು ಇನ್ನೂ ಬಿಗಿಯಾಗದಂತೆ ಧರ್ಮನಿಂದೆಯನ್ನು ಬಿಟ್ಟುಬಿಡಿ. ‘ಇಡೀ ನಾಡೇ ನಾಶವಾಗಲಿ’ ಎಂಬ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ತೀರ್ಪನ್ನು ನಾನು ಕೇಳಿದ್ದೇನೆ.</verse>
				<verse number="23">ನನ್ನ ಮಾತಿಗೆ ಕಿವಿಗೊಡಿ, ನಾನು ಹೇಳುವುದನ್ನು ಗಮನವಿಟ್ಟು ಆಲಿಸಿ.</verse>
				<verse number="24">ಬಿತ್ತನೆಗಾಗಿ ಉಳುವವನು ಸದಾ ಉತ್ತುಕೊಂಡೇ ಇರುವನೋ? ಪ್ರತಿನಿತ್ಯವೂ ಮಣ್ಣನ್ನು ಕೆಳಮೇಲು ಮಾಡುತ್ತಾ ಕುಂಟೆಹೊಡೆದುಕೊಂಡೇ ಇರುವನೋ?</verse>
				<verse number="25">ಒಮ್ಮೆ ಭೂಮಿಯನ್ನು ಹಸನುಮಾಡಿದ ಮೇಲೆ ಜೀರಿಗೆಯನ್ನು ಚೆಲ್ಲಿ, ಸದಾಪನ್ನು ಬಿತ್ತುವವನಲ್ಲವೆ? ಗೋದಿಯನ್ನು ಸಾಲುಸಾಲಾಗಿಯೂ ಬಾರ್ಲಿಯನ್ನು ತಕ್ಕ ಸ್ಥಳದಲ್ಲಿ ಬಿತ್ತಿ, ಕಡಲೆಯನ್ನು ಅಂಚಿನಲ್ಲಿ ಹಾಕುವವನಲ್ಲವೆ?</verse>
				<verse number="26">ಅವನ ದೇವರು ಇದನ್ನೆಲ್ಲಾ ಸರಿಯಾಗಿ ತಿಳಿಸಿ ಕಲಿಸಿಕೊಡುತ್ತಾರೆ.</verse>
				<verse number="27">ಸದಾಪನ್ನು ಒಕ್ಕುವುದು ಕಣದ ಗುಂಡಿನಿಂದಲ್ಲ, ದೊಣ್ಣೆಯಿಂದಲೇ.</verse>
				<verse number="28">ಗೋದಿಯನ್ನು ಒಕ್ಕುವಾಗ ಕುದುರೆಗಳನ್ನು ಹೊಡೆದು ಗುಂಡನ್ನು ಉರುಳಿಸಿ ಕಾಳನ್ನು ಪುಡಿಪುಡಿಮಾಡುವನೋ? ಇಲ್ಲ.</verse>
				<verse number="29">ಈ ವಿವೇಕವು ಕೂಡ ಸೇನಾಧೀಶ್ವರ ಸರ್ವೇಶ್ವರನಿಂದಲೇ ಬರುತ್ತದೆ. ಅವರ ಆಲೋಚನೆ ಅತಿಶಯವಾದುದು. ಅವರ ಜ್ಞಾನ ಸರ್ವಶ್ರೇಷ್ಠವಾದುದು.</verse>
			</chapter>
			<chapter number="29">
				<verse number="1">ಅರೀಯೇಲೇ, ಅರೀಯೇಲೇ, ದಾವೀದನು ದಂಡಿಳಿದ ಪಟ್ಟಣವೇ, ನಿನಗೆ ಧಿಕ್ಕಾರ! ಒಂದೆರಡು ವರ್ಷ ತುಂಬಲಿ. ಹಬ್ಬಹುಣ್ಣಿಮೆಗಳು ಕಳೆಯಲಿ.</verse>
				<verse number="2">ಅನಂತರ ನಾನು ಅರೀಯೇಲನ್ನು ಬಾಧಿಸುವೆನು. ಅಲ್ಲಿ ಅರಚಾಟ ಕಿರಿಚಾಟ ಇರುವುದು. ಆ ಪಟ್ಟಣವು ವಾಸ್ತವವಾಗಿ ನನಗೆ ಅರೀಯೇಲಾಗಿಯೇ ಪರಿಣಮಿಸುವುದು.</verse>
				<verse number="3">ನಾನು ನಿನ್ನ ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೊತ್ತಲ ಕಟ್ಟುವೆನು. ದಿಬ್ಬವನ್ನೆಬ್ಬಿಸಿ ನಿನ್ನನ್ನು ಮುತ್ತುವೆನು.</verse>
				<verse number="4">ನೀನು ಕುಗ್ಗಿ ಭೂಮಿಯೊಳಗಿಂದ ಮಾತಾಡುವೆ. ನಿನ್ನ ನುಡಿ ಮಣ್ಣಿನೊಳಗಿಂದ ಶಿಥಿಲ ಸ್ವರವಾಗಿ ಹೊರಡುವುದು. ನಿನ್ನ ಧ್ವನಿ ಭೂತದ ಧ್ವನಿಯಂತೆ ನೆಲದೊಳಗಿಂದ ಬರುವುದು. ಧೂಳಿನೊಳಗಿಂದ ನಿನ್ನ ಮಾತು ಲೊಚಗುಟ್ಟುವಂತೆ ಕೇಳಿಸುವುದು.</verse>
				<verse number="5">ಅರೀಯೇಲೇ, ಗುಂಪುಗುಂಪಾಗಿ ಕೂಡಿಬರುವ ನಿನ್ನ ಶತ್ರುಗಳು ಧೂಳಿಪುಡಿಯಂತೆ ತೂರಿಹೋಗುವರು. ತಂಡೋಪತಂಡವಾಗಿ ಬಂದಿರುವ ಭಯಂಕರ ಸೈನಿಕರು ಹೊಟ್ಟಿನಂತೆ ಹಾರಿಹೋಗುವರು. ತಟ್ಟನೆ ಕ್ಷಣಮಾತ್ರದಲ್ಲಿ ಕಣ್ಮರೆಯಾಗುವರು.</verse>
				<verse number="6">ಗುಡುಗು, ಭೂಕಂಪ, ಮಹಾಗರ್ಜನೆ, ಬಿರುಗಾಳಿ, ಚಂಡಮಾರುತ, ಭಸ್ಮಮಾಡುವಂಥ ಅಗ್ನಿಜ್ವಾಲೆ - ಇವುಗಳ ಮೂಲಕ ಸರ್ವೇಶ್ವರ ನಿನ್ನ ಪರವಾಗಿ ಪ್ರತ್ಯಕ್ಷವಾಗುವರು.</verse>
				<verse number="7">ಆಗ, ನಿನ್ನ ಮೇಲೆ ಹೋರಾಡಿ, ನಿನಗೂ ನಿನ್ನ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ, ನಿನ್ನನ್ನು ಬಾಧಿಸುವ ಸಕಲ ಜಾತಿಜನಾಂಗಗಳು ಕನಸಿನಂತೆ, ರಾತ್ರಿಕಾಲದ ಸ್ವಪ್ನದಂತೆ ಮಾಯವಾಗುವುವು.</verse>
				<verse number="8">ಸಿಯೋನ್ ಪರ್ವತಕ್ಕೆ ವಿರುದ್ಧವಾಗಿ ಹೋರಾಡುವ ಸಕಲ ರಾಷ್ಟ್ರಗಳ ಸಮುದಾಯದ ಗತಿ ಸ್ವಪ್ನಕಾಣುವವನ ಗತಿಯಾಗುವುದು. ಹಸಿದಿರುವ ಅವನು ಉಣ್ಣುವಂತೆ ಕನಸುಕಂಡರೂ ಎಚ್ಚರವಾದಾಗ ಅವನ ಹೊಟ್ಟೆ ಬರಿದಾಗಿಯೇ ಇರುತ್ತದೆ. ಬಾಯಾರಿದ ಅವನು ಕುಡಿಯುವಂತೆ ಕನಸು ಕಂಡರೂ ಎಚ್ಚರವಾದಾಗ ಅವನ ಹೊಟ್ಟೆ ಬರಿದಾಗಿಯೇ ಇರುತ್ತದೆ. ಬಾಯಾರಿದ ಅವನು ಕುಡಿಯುವಂತೆ ಕನಸು ಕಂಡರೂ ಎಚ್ಚರವಾದಾಗ ಬಳಲಿ ಬಾಯಾರಿಕೆಯಿಂದಲೇ ಇರುತ್ತಾನೆ.</verse>
				<verse number="9">ನಿಮ್ಮನ್ನು ನೀವೇ ಬೆರಗುಮಾಡಿಕೊಂಡು ನಿಬ್ಬೆರಗಾಗಿರಿ. ಕುರುಡು ಮಾಡಿಕೊಂಡು ಕಡುಕುರುಡರಾಗಿರಿ. ಮದ್ಯಪಾನ ಮಾಡದೆಯೇ ಮತ್ತರಾಗಿರಿ, ಕುಡಿಯದೆಯೇ ಓಲಾಡಿರಿ.</verse>
				<verse number="10">ಸರ್ವೇಶ್ವರ ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ ಪ್ರವಾದಿಗಳೆಂಬ ಕಣ್ಣುಗಳನ್ನು ಕಟ್ಟಿಬಿಟ್ಟಿದ್ದಾರೆ. ದಿವ್ಯದರ್ಶನಗಳೆಂಬ ಕಲೆಗಳಿಗೆ ಮುಸುಕು ಹಾಕಿಬಿಟ್ಟಿದ್ದಾರೆ.</verse>
				<verse number="11">ಈ ಕಾರಣ, ನಿನ್ನ ಕುರಿತ ದಿವ್ಯದರ್ಶನ ನಿಗೂಢ ಗ್ರಂಥವಾಕ್ಯವಾಗಿಬಿಟ್ಟಿದೆ. ಅದನ್ನು ಅಕ್ಷರಬಲ್ಲವನಿಗೆ, “ದಯಮಾಡಿ ಇದನ್ನು ಓದು,” ಎಂದು ಕೊಟ್ಟರೆ, ಅವನು: “ಇದು ನಿಗೂಢವಾಗಿದೆ, ಆಗುವುದಿಲ್ಲ,” ಎನ್ನುತ್ತಾನೆ.</verse>
				<verse number="12">ಅಕ್ಷರವಿಲ್ಲದವನಿಗೆ, “ದಯವಿಟ್ಟು ಇದನ್ನು ಓದು,” ಎಂದು ಒಪ್ಪಿಸಿದರೆ, ಅವನು: “ನನಗೆ ಅಕ್ಷರವಿದ್ಯೆ ಇಲ್ಲ,” ಎನ್ನುತ್ತಾನೆ.</verse>
				<verse number="13">ಸರ್ವೇಶ್ವರ ಹೀಗೆಂದರು: “ಈ ಜನರು ನನ್ನನ್ನು ಸಮೀಪಿಸುವುದು ಬರೀ ಮಾತಿನ ಮರ್ಯಾದೆಯಿಂದ, ಇವರು ನನ್ನನ್ನು ಸನ್ಮಾನಿಸುವುದು ಬರೀ ಮಾತಿನ ಮಾಲೆಯಿಂದ, ಇವರ ಹೃದಯವಾದರೋ ಬಲು ದೂರವಿದೆ ನನ್ನಿಂದ, ಇವರು ನನಗೆ ಸಲ್ಲಿಸುವ ಭಕ್ತಿ ಕೂಡಿದೆ ಕೇವಲ ಭಯದಿಂದ, ಕಲಿತಿಹರಿವರು ಮಾನವಕಲ್ಪಿತ ಕಟ್ಟಳೆಯನು ಬಾಯಿಪಾಠದಿಂದ.</verse>
				<verse number="14">ಇಂತಿರಲು ಇವರ ಮಧ್ಯೆ ಎಸಗುವೆನು ಅಧಿಕಾಶ್ಚರ್ಯವಾದ ಅದ್ಭುತಕಾರ್ಯಗಳನು, ಅಳಿವುದು ಇವರ ಜ್ಞಾನಿಗಳ ಜ್ಞಾನವು, ಅಡಗುವುದು ವಿವೇಕಿಗಳ ವಿವೇಕವು\.</verse>
				<verse number="15">ತಮ್ಮ ಆಲೋಚನೆಯನ್ನು ಸರ್ವೇಶ್ವರ ಸ್ವಾಮಿಯಿಂದ ಬಚ್ಚಿಡುವುದಕ್ಕಾಗಿ ಒಳಸಂಚುಮಾಡುವವರಿಗೆ ಧಿಕ್ಕಾರ! ಇವರು, “ನಮ್ಮನ್ನು ಯಾರು ನೋಡಿಯಾರು? ನಮ್ಮನ್ನು ಯಾರು ಗಮನಿಸಿಯಾರು?” ಎಂದುಕೊಂಡು ಕತ್ತಲಲ್ಲೇ ತಮ್ಮ ಕೃತ್ಯಗಳನ್ನು ನಡೆಸುತ್ತಾರೆ.</verse>
				<verse number="16">ಇವರು ಎಲ್ಲವನ್ನೂ ತಲೆಕೆಳಗಾಗಿಸುತ್ತಾರೆ. ಜೇಡಿಮಣ್ಣು ಕುಂಬಾರನಿಗೆ ಸಾಟಿಯೇ? ಕೃತಿಯು ತನ್ನ ಕರ್ತನನ್ನೇ ಕುರಿತು: “ನಿನಗೆ ಬುದ್ಧಿಯಿಲ್ಲ,” ಎಂದೀತೆ?</verse>
				<verse number="17">ಕೊಂಚ ಕಾಲದೊಳಗೆ ಲೆಬನೋನ್ ಅರಣ್ಯವು ತೋಟವಾಗುವುದು. ಈಗಿನ ತೋಟವಾದರೋ ಅರಣ್ಯವಾಗಿ ಕಾಣಿಸುವುದು.</verse>
				<verse number="18">ಆ ದಿನದಂದು ಕಿವುಡರು ಗ್ರಂಥವಾಕ್ಯಗಳನ್ನು ಓದುವುದನ್ನು ಕೇಳುವರು. ಕುರುಡರಿಗೆ ಮಬ್ಬಿನಲ್ಲೂ ಕತ್ತಲಲ್ಲೂ ಕಣ್ಣು ಕಾಣಿಸುವುದು.</verse>
				<verse number="19">ದೀನದಲಿತರು ಸರ್ವೇಶ್ವರನಲ್ಲಿ ಅತಿಯಾಗಿ ಆನಂದಿಸುವರು. ಬಡಬಗ್ಗರು ಇಸ್ರಯೇಲಿನ ಪರಮಪಾವನ ಸ್ವಾಮಿಯಲ್ಲಿ ಉಲ್ಲಾಸಿಸುವರು.</verse>
				<verse number="20">ಏಕೆಂದರೆ ಭಯೋತ್ಪಾದಕರು ನಿಶ್ಶೇಷರಾಗುವರು, ಧರ್ಮನಿಂದಕರು ನಿರ್ನಾಮವಾಗುವರು.</verse>
				<verse number="21">ಸುಳ್ಳುಸಾಕ್ಷಿ ಹೇಳಿ ತಪ್ಪುಹೊರಿಸುವವರು, ನ್ಯಾಯಸ್ಥಾನದಲ್ಲಿ ದೋಷವನ್ನು ಖಂಡಿಸುವವರಿಗೆ ಉರುಲೊಡ್ಡುವರು, ನೀತಿವಂತನಿಗೆ ನ್ಯಾಯ ತಪ್ಪಿಸುವವರು - ಹೀಗೆ ಅಧರ್ಮದಲ್ಲಿ ನಿರತರಾಗಿರುವ ಇವರೆಲ್ಲರು ನಿರ್ಮೂಲರಾಗುವರು.</verse>
				<verse number="22">ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಸರ್ವೇಶ್ವರ ಸ್ವಾಮಿ ಯಕೋಬನ ಮನೆತನದ ವಿಷಯವಾಗಿ ಹೀಗೆನ್ನುತ್ತಾರೆ: “ಯಕೋಬ ವಂಶದವರೇ, ಇನ್ನು ಮೇಲೆ ನೀವು ನಾಚಿಕೆಗೀಡಾಗುವುದಿಲ್ಲ, ನಿಮ್ಮ ಮುಖ ಇನ್ನು ಬಾಡುವುದಿಲ್ಲ.</verse>
				<verse number="23">ನಿಮ್ಮ ವಂಶಜರು ತಮ್ಮ ಮಧ್ಯದಲ್ಲಿ ನಾನು ಎಸಗುವ ಕಾರ್ಯಗಳನ್ನು ನೋಡಿ, ನನ್ನ ನಾಮವೇ ಪರಮಪೂಜಿತವೆಂದು ಸ್ಥಿರಪಡಿಸುವರು. ಹೌದು, ಯಕೋಬ ವಂಶದ ಪರಮಪಾವನ ಸ್ವಾಮಿಯಾದ ನನ್ನನ್ನು ಪ್ರತಿಷ್ಠಾಪಿಸುವರು. ಇಸ್ರಯೇಲರ ದೇವರಾದ ನನ್ನಲ್ಲಿ ಭಯಭಕ್ತಿಯಿಂದಿರುವರು.</verse>
				<verse number="24">ಚಂಚಲಚಿತ್ತರು ಬುದ್ಧಿವಂತರಾಗುವರು. ಗೊಣಗುಟ್ಟುವವರು ಧ್ಯಾನಮಗ್ನರಾಗುವರು.</verse>
			</chapter>
			<chapter number="30">
				<verse number="1">ಸರ್ವೇಶ್ವರ ಸ್ವಾಮಿಯ ನುಡಿಯಿದು: “ದ್ರೋಹಿಗಳಾದ ಈ ಪೀಳಿಗೆಗೆ ಧಿಕ್ಕಾರ! ಇವರು ನನ್ನನ್ನು ಕೇಳದೆ ತಮ್ಮದೇ ಆದ ಯೋಜನೆಯನ್ನು ಸಾಧಿಸುತ್ತಾರೆ. ನನ್ನಾತ್ಮಪ್ರೇರಣೆಯಿಲ್ಲದೆ ತಂತ್ರೋಪಾಯಗಳನ್ನು ಹೂಡುತ್ತಾರೆ. ಪಾಪದ ಮೇಲೆ ಪಾಪವನ್ನು ಸೇರಿಸಿಕೊಳ್ಳುತ್ತಾರೆ.</verse>
				<verse number="2">ನನ್ನ ಸಲಹೆಯನ್ನು ಕೇಳದೆ ಈಜಿಪ್ಟಿಗೆ ಪ್ರಯಾಣ ಬೆಳೆಸಿದ್ದಾರೆ. ಫರೋಹನ ಆಶ್ರಯವನ್ನು ಬಯಸುತ್ತಾರೆ. ಈಜಿಪ್ಟಿನವರನ್ನು ಮರೆಹೋಗಬೇಕೆಂದಿದ್ದಾರೆ.</verse>
				<verse number="3">ಆದರೆ ಫರೋಹನ ಆಶ್ರಯದಿಂದ ಅವರಿಗೆ ನಾಚಿಕೆಯಾಗುವುದು. ಈಜಿಪ್ಟಿನವರನ್ನು ಮರೆಹೋಗುವುದರಿಂದ ಅವರಿಗೆ ಅವಮಾನ ಉಂಟಾಗುವುದು.</verse>
				<verse number="4">ಫರೋಹನ ಸಾಮಂತರಾಜರು ಚೊವನಿನಲ್ಲಿದ್ದಾರೆ. ಅವನ ರಾಯಭಾರಿಗಳು ಹಾನೇಸನ್ನು ತಲುಪಿದ್ದಾರೆ.</verse>
				<verse number="5">ಆದರೂ ಅವರು ಯಾವ ಸಹಾಯವನ್ನಾಗಲೀ ಸೌಕರ್ಯವನ್ನಾಗಲೀ ನೀಡಲಾರರು. ಬದಲಿಗೆ, ಈ ಪೀಳಿಗೆಯವರಿಗೆ ನಾಚಿಕೆಯಾಗುವುದು, ಅವಮಾನವಾಗುವುದು, ಆ ನಿಷ್ಪ್ರಯೋಜಕ ರಾಷ್ಟ್ರದ ಬಗ್ಗೆ ಎಲ್ಲರೂ ವಿಷಾದಿಸುವರು.</verse>
				<verse number="6">ನೆಗೇಬಿನ ಮೃಗಗಳನ್ನು ಕುರಿತ ದೈವವಾಣಿ: ಸಿಂಹಸಿಂಹಿಣಿಗಳಿಂದಲೂ ವಿಷಸರ್ಪ - ಘಟಸರ್ಪಗಳಿಂದಲೂ ಕೂಡಿದ ಭಯಂಕರ ಹಾಗೂ ಸಂಕಟಕರವಾದ ಆ ನಾಡಿನ ಮಾರ್ಗವಾಗಿ ತಮ್ಮ ಧನಕನಕಗಳನ್ನು ಕತ್ತೆಗಳ ಮೇಲೂ ಆಸ್ತಿಪಾಸ್ತಿಗಳನ್ನು ಒಂಟೆಗಳ ಮೇಲೂ ಹೊರಿಸಿಕೊಂಡು ನಿಷ್ಪ್ರಯೋಜಕವಾದ ಆ ರಾಷ್ಟ್ರಕ್ಕೆ ಹೋಗುತ್ತಾರೆ.</verse>
				<verse number="7">ಈಜಿಪ್ಟ್ ನೀಡುವ ಸಹಾಯ ನಿರರ್ಥಕ, ನಿಷ್ಫ್ರಯೋಜಕ. ಆದುದರಿಂದಲೇ ಅದಕ್ಕೆ ನಾನು ಜಡವಾಗಿ ಬಿದ್ದಿರುವ ಘಟಸರ್ಪ ಎಂದು ಹೆಸರು ಇಟ್ಟಿದ್ದೇನೆ.</verse>
				<verse number="8">ಸರ್ವೇಶ್ವರ ನನಗೆ ಇಂತೆಂದರು: “ನೀನು ಈಗಲೇ ಹೋಗಿ, ನಾನು ಹೇಳುವುದನ್ನು ಅವರೆದುರಿನಲ್ಲಿಯೆ ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ. ಅದು ಮುಂದಿನ ಕಾಲಕ್ಕೆ - ಶಾಶ್ವತ ಸಾಕ್ಷಿಯಾಗಿರಲಿ.</verse>
				<verse number="9">ಇವರು ದಂಗೆ ಏಳುವ ಜನರು. ಸುಳ್ಳಾಡುವ ಪೀಳಿಗೆ, ಸರ್ವೇಶ್ವರನ ಉಪದೇಶಕ್ಕೆ ಕಿವಿಗೊಡದ ಸಂತಾನ,</verse>
				<verse number="10">ಇವರು ದಿವ್ಯದರ್ಶಿಗಳನ್ನು ನೋಡಿ: “ನಿಮಗೆ ದರ್ಶನವಾಗದಿರಲಿ,” ಎನ್ನುತ್ತಾರೆ. ಪ್ರವಾದಿಗಳಿಗೆ: “ನಯವಾದುದ್ದನ್ನು ನಮಗೆ ನುಡಿಯಿರಿ. ಮಾಯವಾದವುಗಳನ್ನೇ ಪ್ರವಾದನೆ ಮಾಡಿರಿ.</verse>
				<verse number="11">ನಮಗೆ ಅಡ್ಡ ಬರಬೇಡಿ. ನಮ್ಮ ದಾರಿಯಿಂದ ದೂರವಿರಿ. ಇಸ್ರಯೇಲರ ಪರಮಪಾವನ ಸ್ವಾಮಿಯ ವಿಷಯವನ್ನು ನಮ್ಮ ಮುಂದೆ ಎತ್ತಬೇಡಿ,” ಎಂದು ಹೇಳುತ್ತಾರೆ.</verse>
				<verse number="12">ಆದಕಾರಣ, ಇಸ್ರಯೇಲಿನ ಪರಮಪಾವನ ಸ್ವಾಮಿ ಹೀಗೆನ್ನುತ್ತಾರೆ: “ನೀವು ನನ್ನ ಮಾತನ್ನು ತಿರಸ್ಕರಿಸಿ ಹಿಂಸೆ ಕುತಂತ್ರಗಳನ್ನೇ ನೆಚ್ಚಿಕೊಂಡಿದ್ದೀರಿ.</verse>
				<verse number="13">ಇದ್ದಕ್ಕಿದ್ದಂತೆ ಆ ಗೋಡೆ ತಟ್ಟನೆ ಬಿದ್ದುಹೋಗುವುದು. ಅಂತೆಯೇ ನಿಮ್ಮ ಅಪರಾಧ ನಿಮಗೆ ಅಪಾಯಕರವಾಗಿರುವುದು.</verse>
				<verse number="14">ಆ ಗೋಡೆಯೆಂಬ ಕುಂಬಾರನ ಮಡಕೆಯ ಚೂರಿನಿಂದ, ಬೆಂಕಿಯ ಒಲೆಯಿಂದ ಕೆಂಡವನ್ನು ತೆಗೆಯುವುದಕ್ಕಾಗಲೀ ತೊಟ್ಟಿಯ ನೀರನ್ನು ತೋಡಿಕೊಳ್ಳುವುದಕ್ಕಾಗಲೀ ಸಾಧ್ಯವಾಗದು.”</verse>
				<verse number="15">ಪರಮಪಾವನವಾಗಿರುವ ಇಸ್ರಯೇಲಿನ ಸರ್ವೇಶ್ವರ ಸ್ವಾಮಿಯಾದ ನಾನು ನಿಮಗೆ ಹೇಳುವುದೇನೆಂದರೆ: “ನೀವು ಪಶ್ಚಾತ್ತಾಪಪಟ್ಟು ನನಗೆ ಅಭಿಮುಖವಾಗಿ ನೆಮ್ಮದಿಯಿಂದಿದ್ದರೆ ಉದ್ಧಾರವಾಗುವಿರಿ. ಶಾಂತಿಸಮಾಧಾನ ಮತ್ತು ಭಕ್ತಿಭರವಸೆಯಲ್ಲೇ ಶಕ್ತಿಯನ್ನು ಪಡೆಯುವಿರಿ.” ಆದರೆ ನೀವು ಒಪ್ಪಿಕೊಂಡಿಲ್ಲ.</verse>
				<verse number="16">ಬದಲಿಗೆ, “ಬೇಡ ಬೇಡ, ನಾವು ಕುದುರೆಗಳ ಮೇಲೆ ಓಡಿಹೋಗುತ್ತೇವೆ,” ಎಂದುಕೊಂಡಿರಿ. ಅಂತೆಯೇ ಓಡಿಹೋಗುವಿರಿ.” ನಾವು ದೌಡೋಡುವ ಕುದುರೆಗಳ ಮೇಲೆ ಸವಾರಿಮಾಡುತ್ತೇವೆ,” ಎಂದುಕೊಂಡಿರಿ. ಅಂತೆಯೇ ದೌಡೋಡುವವರೇ ನಿಮ್ಮನ್ನು ಅಟ್ಟಿಕೊಂಡುಬರುವರು.</verse>
				<verse number="17">ಒಬ್ಬ ಸೈನಿಕನ ಬೆದರಿಕೆಗೆ ಸಾವಿರ ಜನರು ಪರಾರಿಯಾಗುವರು. ಐದು ಸೈನಿಕರ ಬೆದರಿಕೆಗೆ ನೀವೆಲ್ಲರೂ ಓಡಿಹೋಗುವಿರಿ. ಕಟ್ಟಕಡೆಗೆ ಬೆಟ್ಟದ ತುದಿಯಲ್ಲಿರುವ ಧ್ವಜಸ್ತಂಭದಂತೆ, ಗುಡ್ಡದ ಮೇಲಿರುವ ಕೈಕಂಬದಂತೆ ಒಬ್ಬಂಟಿಗನಾಗಿ ಉಳಿಯುವಿರಿ.</verse>
				<verse number="18">ಆದರೆ ಸರ್ವೇಶ್ವರ ನಿಮಗೆ ಕೃಪೆತೋರಬೇಕೆಂದು ಕಾದಿರುತ್ತಾರೆ. ನಿಮ್ಮನ್ನು ಕರುಣಿಸಲು ಎದ್ದುನಿಂತಿದ್ದಾರೆ. ಅವರು ನ್ಯಾಯಪರರಾದ ದೇವರು, ಅವರಿಗಾಗಿ ಕಾದಿರುವವರೆಲ್ಲರೂ ಧನ್ಯರು.</verse>
				<verse number="19">ಜೆರುಸಲೇಮಿನಲ್ಲಿ ವಾಸಿಸುವ ಸಿಯೋನಿನ ಜನರೇ, ನೀವಿನ್ನು ಅಳಬೇಕಾಗಿಲ್ಲ. ನಿಮ್ಮ ಕೂಗನ್ನು ಕೇಳಿದ್ದೇ, ಸರ್ವೇಶ್ವರ ನಿಮಗೆ ಕೃಪೆತೋರಿಸುವರು. ನಿಮ್ಮ ಸ್ವರವನ್ನು ಕೇಳಿದಾಕ್ಷಣ ಸದುತ್ತರವನ್ನು ದಯಪಾಲಿಸುವರು.</verse>
				<verse number="20">ಅವರು ನಿಮಗೆ ಕಷ್ಟಸಂಕಟವನ್ನು ಅನ್ನಪಾನವಾಗಿ ಕೊಟ್ಟರೂ ನಿಮ್ಮ ಬೋಧಕರು ಇನ್ನು ನಿಮಗೆ ಮರೆಯಾಗಿ ಇರುವುದಿಲ್ಲ. ನೀವು ಅವರನ್ನು ಕಣ್ಣಾರೆ ಕಾಣುವಿರಿ.</verse>
				<verse number="21">ನೀವು ಬಲಕ್ಕಾಗಲೀ ಎಡಕ್ಕಾಗಲೀ ತಿರುಗಿದರೆ, ‘ಇದೇ ಮಾರ್ಗ, ಇದರಲ್ಲೇ ನಡೆಯಿರಿ,’ ಎಂಬ ಮಾತು ಹಿಂದಿನಿಂದ ನಿಮ್ಮ ಕಿವಿಗೆ ಕೇಳಿಸುವುದು.</verse>
				<verse number="22">ಆಗ ಬೆಳ್ಳಿಯ ಕವಚಗಳಿಂದ ಕೂಡಿದ ನಿಮ್ಮ ವಿಗ್ರಹಗಳನ್ನೂ ಚಿನ್ನದಿಂದ ಲೇಪಿತವಾದ ನಿಮ್ಮ ಬೊಂಬೆಗಳನ್ನೂ ಬಿಸಾಡುವಿರಿ. ಅವುಗಳನ್ನು ಹೊಲೆಮಾಡಿ ‘ತೊಲಗಿ’ ಎಂದು ಹೇಳುತ್ತಾ ಎಸೆದುಬಿಡುವಿರಿ.</verse>
				<verse number="23">ಆಗ ಸರ್ವೇಶ್ವರ ಹೊಲದ ಬಿತ್ತನೆಗೆ ಬೇಕಾದ ಮಳೆಯನ್ನು ನಿಮಗೆ ಸುರಿಸುವರು. ಆ ಹೊಲದ ಬೆಳೆಯಿಂದ ಸಾರವತ್ತಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವರು. ಅಂದು ನಿಮ್ಮ ದನಕರುಗಳು ವಿಶಾಲವಾದ ಹುಲ್ಲುಗಾವಲುಗಳಲ್ಲಿ ಮೇಯುವುವು.</verse>
				<verse number="24">ಹೊಲಗೇಯುವ ನಿಮ್ಮ ಎತ್ತುಕತ್ತೆಗಳು ಮೊರದಿಂದಲೂ ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವುವು.</verse>
				<verse number="25">ಕೋಟೆಕೊತ್ತಲಗಳು ಬಿದ್ದುಹೋಗುವುವು. ಶತ್ರುಗಳ ಮಹಾಸಂಹಾರ ನಡೆಯುವ ಆ ದಿನದಂದು ಉನ್ನತ ಪರ್ವತಗಳಿಂದಲೂ ಎತ್ತರವಾದ ಗುಡ್ಡಗಳಿಂದಲೂ ತೊರೆಗಳೂ ನೀರಿನ ಕಾಲುವೆಗಳೂ ಹರಿಯುವುವು.</verse>
				<verse number="26">ಇದಲ್ಲದೆ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವುದು. ಸೂರ್ಯನ ಬೆಳಕು ಏಳ್ಮಡಿ ಹೆಚ್ಚುವುದು. ಏಳು ದಿನಗಳ ಬೆಳಕು ಒಂದೇ ದಿನದ ಬೆಳಕಿನಂತಾಗುವುದು. ಅಂದು ಸರ್ವೇಶ್ವರ ತಮ್ಮ ಜನರ ಹುಣ್ಣುಗಳನ್ನು ಕಟ್ಟುವರು. ತಮ್ಮ ಪೆಟ್ಟಿನಿಂದ ಜನರಿಗಾದ ಗಾಯಗಳನ್ನು ಗುಣಪಡಿಸುವರು.</verse>
				<verse number="27">ಇಗೋ, ಸರ್ವೇಶ್ವರ ನಾಮಧೇಯನು ಬರುತಿಹನು ದೂರದಿಂದ; ಭುಗಿಲೇರುತಿದೆ ಆತನ ಕೋಪ ಏಳುತಿದೆ ದಟ್ಟವಾದ ಧೂಮ ಅದರಿಂದ. ದಹಿಸುವ ಅಗ್ನಿಯಂತಿದೆ ಆತನ ನಾಲಗೆ. ಭರಿತವಾಗಿದೆ ಆತನ ತುಟಿಗಳು ರೋಷದಿಂದ.</verse>
				<verse number="28">ತುಂಬಿತುಳುಕಿ ಕಂಠದವರೆಗೆ ಏರುವ ತೊರೆಯಂತಿದೆ ಆತನ ಶ್ವಾಸ ಆತನ ಕೈಯಲ್ಲಿದೆ ಜನಾಂಗಗಳನ್ನು ಜಾಲಿಸುವ ಜರಡಿಯ ವಿನಾಶ ಜನರ ಕಟಿಬಾಯಲ್ಲಿರುವುದು ದಾರಿ ತಪ್ಪಿಸುವ ಕಡಿವಾಣದ ಪಾಶ.</verse>
				<verse number="29">ನೀವಾದರೋ ಹಾಡುವಿರಿ ಹಬ್ಬದ ರಾತ್ರಿಯಲ್ಲೋ ಎಂಬಂತೆ ಹೃದಯಾನಂದ ಪಡುವಿರಿ, ಇಸ್ರಯೇಲರ ರಕ್ಷಣೆಯ ಕೋಟೆಗೆ, ಸರ್ವೇಶ್ವರನ ಶಿಖರಕ್ಕೆ ಕೊಳಲನೂದುತ ಹೋಗುವವರಂತೆ.</verse>
				<verse number="30">ಆಗ ಸರ್ವೇಶ್ವರ ತಮ್ಮ ಗಂಭೀರವಾದ ವಾಣಿಯನ್ನು ಕೇಳುವಂತೆ ಮಾಡುವರು. ತೀವ್ರಕೋಪ, ದಹಿಸುವ ಅಗ್ನಿಜ್ವಾಲೆ, ಸಿಡಿಯುವ ಮೋಡ, ಚಂಡಮಾರುತ, ಕಲ್ಮಳೆ - ಇವುಗಳಿಂದ ತಮ್ಮ ಶಿಕ್ಷಾಹಸ್ತವನ್ನು ಪ್ರದರ್ಶಿಸುವರು.</verse>
				<verse number="31">ಹೀಗೆ ಸರ್ವೇಶ್ವರ ಸ್ವಾಮಿಯ ವಾಣಿಯನ್ನು ಕೇಳಿದ ಅಸ್ಸೀರಿಯಾದವರು ದಿಗ್ಬ್ರಮೆಗೊಳ್ಳುವರು. ರಾಜದಂಡದ ಶಿಕ್ಷೆಯನ್ನು ಸವಿಯುವರು.</verse>
				<verse number="32">ಸರ್ವೇಶ್ವರ ಸ್ವಾಮಿ ವಿಧಿಸುವ ಪ್ರತಿಯೊಂದು ಪೆಟ್ಟು ತಾಳ ತಮ್ಮಟೆಯಂತೆ ಅವರ ಮೇಲೆ ಬೀಳುವುದು. ಸರ್ವೇಶ್ವರ ತಾವೇ ಅವರ ವಿರುದ್ಧವಾಗಿ ಕೈಬೀಸಿ ಯುದ್ಧಮಾಡುವರು.</verse>
				<verse number="33">ಪುರಾತನ ಕಾಲದಿಂದಲೇ ಅಸ್ಸೀರಿಯದ ಅರಸನಿಗೆ ಅಗ್ನಿಕುಂಡವು ಅಣಿಯಾಗಿದೆ. ಅದನ್ನು ಆಳವಾಗಿಯೂ ಅಗಲವಾಗಿಯೂ ಮಾಡಲಾಗಿದೆ. ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಸೌದೆಯೂ ತುಂಬಿದೆ. ಗಂಧಕದ ಪ್ರವಾಹದೋಪಾದಿಯಲ್ಲಿ ಸರ್ವೇಶ್ವರ ಸ್ವಾಮಿ ತಮ್ಮ ಶ್ವಾಸವನ್ನೂದಿ ಅದನ್ನು ಭುಗಿಲೆಬ್ಬಿಸುವರು.</verse>
			</chapter>
			<chapter number="31">
				<verse number="1">ಇಸ್ರಯೇಲರ ಪರಮಪಾವನ ಸ್ವಾಮಿಯನ್ನು ಆಶ್ರಯಿಸದೆ, ಸಹಾಯಕ್ಕಾಗಿ ಈಜಿಪ್ಟಿಗೆ ತೆರಳುವವರಿಗೆ ಧಿಕ್ಕಾರ! ಅವರಿಗೆ ಬೇಕು ಆ ನಾಡಿನ ಅಶ್ವಬಲ, ರಥಗಳ ಸಂಖ್ಯಾಬಲ, ಸವಾರರ ಶೌರ್ಯ.</verse>
				<verse number="2">ಆದರೆ ಸರ್ವೇಶ್ವರ ಸ್ವಾಮಿ ಬುದ್ಧಿವಂತರು, ಆಡಿದ ಮಾತನ್ನು ಹಿಂದಕ್ಕೆ ತೆಗೆದುಕೊಳ್ಳದವರು, ಕೇಡನ್ನು ಬರಮಾಡಬಲ್ಲವರು. ಕೆಡುಕರ ಕೊಂಪೆಗೂ ದುರುಳರ ಸಹಾಯಕರಿಗೂ ವಿರುದ್ಧವಾಗಿ ನಿಲ್ಲಬಲ್ಲವರು.</verse>
				<verse number="3">ಈಜಿಪ್ಟಿನವರು ಕೇವಲ ಮನುಷ್ಯರೇ ಹೊರತು ದೇವರಲ್ಲ. ಅವರ ಅಶ್ವಗಳು ಮೂಳೆಮಾಂಸವೇ ಹೊರತು ಆಧ್ಯಾತ್ಮಿಕ ದಿವ್ಯಶಕ್ತಿಯಲ್ಲ. ಸರ್ವೇಶ್ವರ ಕೈಯೆತ್ತುವಾಗ ಅದಕ್ಕೆ ವಿರುದ್ಧ ಸಹಾಯ ಮಾಡಿದ ಅವನು ಮುಗ್ಗರಿಸುವನು. ಆ ಸಹಾಯ ಪಡೆದ ಅವನು ಬಿದ್ದುಹೋಗುವನು. ಎಲ್ಲರೂ ಒಟ್ಟಿಗೆ ಅಳಿದುಹೋಗುವರು.</verse>
				<verse number="4">ಸರ್ವೇಶ್ವರ ನನಗೆ ಹೀಗೆಂದು ಹೇಳಿದ್ದಾರೆ: “ಸಿಂಹವೋ ಪ್ರಾಯದ ಸಿಂಹವೋ ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಆ ಕೂಗನ್ನು ಕೇಳಿ ಕುರುಬರನೇಕರು ಕೂಡಿಬಂದರೂ ಅದು ಅವರ ಕೂಗಾಟಕ್ಕೆ ಹೆದರದು, ಅವರ ಗದ್ದಲಕ್ಕೆ ಎದೆಗುಂದದು. ಅಂತೆಯೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆದ ನಾನು ಯುದ್ಧಮಾಡಲು ಸಿಯೋನ್ ಶಿಖರದ ಮೇಲೆ ಇಳಿದು ಬರುವಾಗ ನನ್ನನ್ನು ಯಾರೂ ಹೆದರಿಸುವುದಿಲ್ಲ, ಎದೆಗುಂದಿಸುವಂತಿಲ್ಲ.</verse>
				<verse number="5">ಹಕ್ಕಿಗಳು ಹಾರಾಡುತ್ತಾ ತನ್ನ ಮರಿಗಳನ್ನು ಕಾಪಾಡುವಂತೆ, ಸೇನಾಧೀಶ್ವರ ಸರ್ವೇಶ್ವರನಾದ ನಾನು ಜೆರುಸಲೇಮನ್ನು ಕಾಪಾಡುವೆನು. ಅದನ್ನು ಸಂರಕ್ಷಿಸಿ ಕಾಯುವೆನು, ಅಪಾಯದಿಂದ ತಪ್ಪಿಸುವೆನು.”</verse>
				<verse number="6">ಸರ್ವೇಶ್ವರ ಇಂತೆಂದರು: “ಇಸ್ರಯೇಲಿನ ಜನರೇ, ನೀವು ನನಗೆ ದೊಡ್ಡ ದ್ರೋಹಮಾಡಿದಿರಿ. ಈಗಲಾದರೂ ನನ್ನ ಕಡೆಗೆ ತಿರುಗಿಕೊಳ್ಳಿರಿ.</verse>
				<verse number="7">ನೀವು ಪಾಪಕಳಂಕಿತವಾದ ನಿಮ್ಮ ಕೈಯಿಂದ ನಿರ್ಮಿಸಿರುವ ಬೆಳ್ಳಿಬಂಗಾರದ ವಿಗ್ರಹಗಳನ್ನು ಎತ್ತಿ ಬಿಸಾಡುವ ದಿನ ಬರಲಿದೆ.</verse>
				<verse number="8">ಆ ಅಸ್ಸೀರಿಯಾದವರು ಕತ್ತಿಯಿಂದ ಹತರಾಗುವರು, ಮನುಷ್ಯರ ಕತ್ತಿಯಿಂದಲ್ಲ; ಖಡ್ಗವು ಅವರನ್ನು ಕಬಳಿಸುವುದು, ಅದು ಮಾನವ ಖಡ್ಗವಲ್ಲ. ಅವರು ಕತ್ತಿಗೆ ಹೆದರಿ ಓಡುವರು. ಅವರ ಯುವಕರು ಗುಲಾಮರಾಗುವರು.</verse>
				<verse number="9">ಅವರಿಗೆ ಆಶ್ರಯ ನೀಡಿದವನು, ಭಯದಿಂದ ಪಲಾಯನ ಮಾಡಿಬಿಡುವನು, ಅವರ ದಳಪತಿಗಳು ಧ್ವಜವನ್ನೇ ಬಿಟ್ಟು ದಿಕ್ಕುಪಾಲಾಗುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ. ಪ್ರಭುವಿನ ಅಗ್ನಿ ಇರುವುದು ಸಿಯೋನಿನಲ್ಲಿ, ಅವರ ಅಗ್ನಿಕುಂಡ ಜೆರುಸಲೇಮಿನಲ್ಲಿ.</verse>
			</chapter>
			<chapter number="32">
				<verse number="1">ಇಗೋ, ರಾಜನೊಬ್ಬನು ನೀತಿಗನುಸಾರ ರಾಜ್ಯವಾಳುವನು. ದೇಶಾಧಿಪತಿಗಳು ನ್ಯಾಯದಿಂದ ದೊರೆತನಮಾಡುವರು.</verse>
				<verse number="2">ಪ್ರತಿಯೊಬ್ಬನೂ ಬಿರುಗಾಳಿಗೆ ತಡೆಯಂತೆ, ಬಿರುಮಳೆಗೆ ಬಿಡಾರದಂತೆ, ಮರುಭೂಮಿಯಲ್ಲಿ ಜಲಧಾರೆಯಂತೆ, ಬೆಂಗಾಡಿನಲ್ಲಿ ಭಾರಿಬಂಡೆಯ ನೆರಳಿನಂತೆ ಇರುವನು.</verse>
				<verse number="3">ಆಗ ನೋಡುವವರ ಕಣ್ಣು ಮಬ್ಬಾಗದು, ಕೇಳುವವರ ಕಿವಿ ಮಂದವಾಗದು.</verse>
				<verse number="4">ಆತುರಗಾರರ ಬುದ್ಧಿ ಸಾವಧಾನದಿಂದ ಗ್ರಹಿಸುವುದು. ತೊದಲುಮಾತಿನವರ ನಾಲಿಗೆ ಸ್ವಚ್ಛವಾಗಿಯೂ ತ್ವರಿತವಾಗಿಯೂ ನುಡಿಯುವುದು.</verse>
				<verse number="5">ಇನ್ನು ಮೇಲೆ ಮೂರ್ಖನು ಮಹಾತ್ಮನೆನಿಸಿಕೊಳ್ಳನು. ಕಳ್ಳನು ಒಳ್ಳೆಯವನೆನಿಸಿಕೊಳ್ಳನು.</verse>
				<verse number="6">ಮೂರ್ಖನು ಆಡುವುದು ಕೆಡುಕನ್ನೇ, ಅವನು ಮಾಡುವುದು ಅಧರ್ಮವನ್ನೇ, ನುಡಿಯುವುದು ಸರ್ವೇಶ್ವರ ಸ್ವಾಮಿಗೆ ವಿರುದ್ಧವಾದ ಅಸತ್ಯವನ್ನೇ. ಆತ ಹಸಿದವರಿಗೆ ಆಹಾರವನ್ನು ಕೊಡುವುದಿಲ್ಲ. ಬಾಯಾರಿದವರಿಗೆ ನೀರನ್ನು ಕೊಡಿಸುವುದಿಲ್ಲ.</verse>
				<verse number="7">ಕಳ್ಳನ ಸಾಧನಗಳು ಕೆಟ್ಟವುಗಳೇ. ಅವನ ಯೋಜನೆಗಳು ಅಬದ್ಧವಾದುವೇ. ದೀನದಲಿತರ ಕೋರಿಕೆಗಳು ನ್ಯಾಯಬದ್ಧವಾಗಿದ್ದರೂ ಸುಳ್ಳುಮಾತುಗಳಿಂದ ಅವರನ್ನು ಹಾಳುಮಾಡುತ್ತಾನೆ.</verse>
				<verse number="8">ಆದರೆ ಧರ್ಮವಂತನು ಮಹತ್ಕಾರ್ಯಗಳಲ್ಲಿಯೇ ನಿರತನಾಗಿರುತ್ತಾನೆ.</verse>
				<verse number="9">ಸುಖಜೀವಿಗಳಾದ ಮಹಿಳೆಯರೇ, ಏಳಿ ನನ್ನ ಮಾತನ್ನು ಕೇಳಿ. ನಿಶ್ಚಿಂತೆಯಿಂದಿರುವ ಯುವತಿಯರೇ, ನನ್ನ ಧ್ವನಿಗೆ ಕಿವಿಗೊಡಿ.</verse>
				<verse number="10">ಈಗ ಸುಖವಾಗಿ ಕುಳಿತಿದ್ದೀರಿ, ನಿಶ್ಚಿಂತೆಯಿಂದಿದ್ದೀರಿ. ಇನ್ನು ಒಂದು ವರ್ಷದ ಮೇಲೆ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. ಏಕೆಂದರೆ, ಆಗ ದ್ರಾಕ್ಷೆಯ ಕೊಯಿಲು ನಿಂತುಹೋಗುವುದು. ಯಾವ ಬೆಳೆಯೂ ನಿಮಗೆ ದಕ್ಕದು.</verse>
				<verse number="11">ಸುಖವಾಗಿರುವವರೇ, ಗಡಗಡನೆ ನಡುಗಿರಿ. ನಿಶ್ಚಿಂತರಾಗಿರುವವರೇ, ಕಳವಳಗೊಳ್ಳಿರಿ. ನಿಮ್ಮ ಬಟ್ಟೆಗಳನ್ನು ಕಿತ್ತುಹಾಕಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ.</verse>
				<verse number="12">ಎದೆ ಬಡಿದುಕೊಂಡು ಗೋಳಾಡಿರಿ. ಏಕೆಂದರೆ ಹುಲುಸಾದ ಹೊಲಗಳು ಫಲವತ್ತಾದ ದ್ರಾಕ್ಷಾತೋಟಗಳು ನಾಶವಾಗಿವೆ.</verse>
				<verse number="13">ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದರುಗಳು ಹುಟ್ಟಿಕೊಂಡಿವೆ. ಉಲ್ಲಾಸದಿಂದ ಕೂಡಿದ್ದ ಮನೆಗಳೂ ಲವಲವಿಕೆಯಿಂದ ತುಂಬಿದ್ದ ನಗರಗಳೂ ಶೂನ್ಯವಾಗಿವೆ, ಅರಮನೆ ಪಾಳುಬಿದ್ದಿದೆ.</verse>
				<verse number="14">ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು; ಓಫೆಲ್ ಗುಡ್ಡವು, ಕೀಸ್ ಕೋವರವು ಶಾಶ್ವತವಾಗಿ ಗುಹೆಗಳಾಗುವುವು. ಕಾಡುಕತ್ತೆಗಳಿಗೆ ಬಯಲಾಗಿಯೂ ದನಕರುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುವು.</verse>
				<verse number="15">ಆದರೆ ದೇವರು ಉನ್ನತಲೋಕದಿಂದ ತಮ್ಮ ಪವಿತ್ರಾತ್ಮ ಧಾರೆಯನ್ನು ನಮ್ಮ ಮೇಲೆ ಸುರಿಯುವರು; ಆಗ ಪಾಳುಭೂಮಿ ಫಲಭರಿತ ಭೂಮಿಯಾಗುವುದು; ಫಲಭರಿತ ಭೂಮಿ ಸಮೃದ್ಧ ಅರಣ್ಯವಾಗಿ ಮಾರ್ಪಡುವುದು.</verse>
				<verse number="16">ಸತ್ಯಸಂಧತೆ ಕಾಡುಮೇಡೆನ್ನದೆ ಎಲ್ಲೆಡೆ ನೆಲೆಗೊಳ್ಳುವುದು. ಸರ್ವರೂ ಸತ್ಯಸಂಧರಾಗಿರುವುದರಿಂದ ಸಮಾಧಾನ ನೆಲೆಗೊಳ್ಳುವುದು.</verse>
				<verse number="17">ಆ ಸತ್ಯಸಂಧತೆಯಿಂದ ಚಿರಶಾಂತಿ ಮತ್ತು ಸುಭದ್ರತೆ ಪರಿಣಮಿಸುವುದು.</verse>
				<verse number="18">ನನ್ನ ಜನರು ಶಾಂತಿಸದನಗಳಲ್ಲಿಯೂ ನಿರ್ಭಯವಾದ ನಿಲಯಗಳಲ್ಲಿಯೂ ನೆಮ್ಮದಿಯಾಗಿರುವ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು.</verse>
				<verse number="19">ಕಲ್ಮಳೆ ಸುರಿದು ಕಾಡು ಹಾಳಾದರೂ ಶತ್ರುಗಳ ಪಟ್ಟಣವು ನೆಲಸಮವಾದರೂ ನೀವು ಸಂತೋಷದಿಂದ ಬಾಳುವಿರಿ.</verse>
				<verse number="20">ನೀರಿರುವ ಕಡೆಗಳಲ್ಲೆಲ್ಲಾ ಬಿತ್ತನೆಮಾಡುವಿರಿ. ದನಕತ್ತೆಗಳನ್ನು ಇಷ್ಟಬಂದ ಹಾಗೆ ಮೇಯಲು ಬಿಡುವಿರಿ.</verse>
			</chapter>
			<chapter number="33">
				<verse number="1">ಹಾಳುಮಾಡುತ್ತಿರುವವನೇ, ನಿನಗೆ ಧಿಕ್ಕಾರ! ನಿನ್ನನ್ನು ಯಾರೂ ಹಾಳುಮಾಡದಿದ್ದರೂ ನೀನು ಹಾಳುಮಾಡುತ್ತಿರುವೆ. ನಿನ್ನನ್ನು ಯಾರೂ ವಂಚಿಸದಿದ್ದರೂ ನೀನು ವಂಚನೆಮಾಡುತ್ತಿರುವೆ. ಇದಕ್ಕೆಲ್ಲ ಅಂತ್ಯವಿದೆ. ಈಗ ಹಾಳುಮಾಡುತ್ತಿರುವ ನೀನು ಆಗ ನೀನೇ ಹಾಳಾಗುವೆ. ಈಗ ವಂಚನೆ ಮಾಡುತ್ತಿರುವ ನೀನೇ ವಂಚಿತನಾಗುವೆ.</verse>
				<verse number="2">ಸರ್ವೇಶ್ವರಾ, ನಮಗೆ ಕೃಪೆತೋರಿ. ನಿಮಗಾಗಿ ಕಾದಿದ್ದೇವೆ. ದಿನದಿಂದ ದಿನಕ್ಕೆ ನಮಗೆ ಬೆಂಬಲವಾಗಿರಿ. ಆಪತ್ಕಾಲದಲ್ಲಿ ನಮಗೆ ರಕ್ಷಣೆ ನೀಡಿರಿ.</verse>
				<verse number="3">ನಿಮ್ಮ ಮೇಘಗರ್ಜನೆಗೆ ಜನಾಂಗಗಳು ಓಡುತ್ತವೆ. ನೀವು ಎದ್ದುನಿಂತಾಗ ರಾಷ್ಟ್ರಗಳು ದಿಕ್ಕುಪಾಲಾಗುತ್ತವೆ.</verse>
				<verse number="4">ಅವರು ಕೊಳ್ಳೆಗೆ ಒಳಗಾಗುವರು; ಜನ ಮಿಡತೆಗಳಂತೆ ಆ ಕೊಳ್ಳೆಗೆ ಹಾರಿಬೀಳುವರು.</verse>
				<verse number="5">ಸರ್ವೇಶ್ವರ ಸ್ವಾಮಿ ಉನ್ನತೋನ್ನತರು, ಮೇಲಿನ ಲೋಕದಲ್ಲಿ ಆಸೀನರು. ಅವರು ಜೆರುಸಲೇಮನ್ನು ನ್ಯಾಯನೀತಿಯಿಂದಲೂ ಸತ್ಯಸಂಧತೆಯಿಂದಲೂ ತುಂಬಿಸುವರು.</verse>
				<verse number="6">ನಿಮ್ಮ ಕಾಲಕ್ಕೆ ಬೇಕಾದ ಸ್ಥಿರತೆಯನ್ನು ನೀಡುವರು. ರಕ್ಷಣೆಗೆ ಬೇಕಾದ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡುವರು. ಸರ್ವೇಶ್ವರ ಸ್ವಾಮಿಯಲ್ಲಿ ನಿಮಗಿರುವ ಭಯಭಕ್ತಿಯೇ ನಿಮ್ಮ ನಿಧಿಯಾಗಿರುವುದು.</verse>
				<verse number="7">ಇಗೋ, ವೀರರು ಹೊರಗೆ ಹಾಹಾಕಾರ ಮಾಡುತಿಹರು. ಶಾಂತಿದೂತರಾದ ರಾಯಭಾರಿಗಳು ಘೋರವಾಗಿ ಅಳುತಿಹರು.</verse>
				<verse number="8">ರಾಜಮಾರ್ಗಗಳು ಬರಿದಾಗಿವೆ. ದಾರಿಗರೇ ಇಲ್ಲ.. ಶತ್ರುಗಳು ಒಪ್ಪಂದವನ್ನು ಮುರಿದಿದ್ದಾರೆ. ಸಾಕ್ಷಿಗಳನ್ನು ತಿರಸ್ಕರಿಸಿದ್ದಾರೆ. ಮಾನವರನ್ನು ಗಣನೆಗೆ ತಂದುಕೊಳ್ಳದವರಾಗಿದ್ದಾರೆ.</verse>
				<verse number="9">ನಾಡು ದುಃಖದಿಂದ ಸೊರಗುತ್ತಿದೆ. ಲೆಬನೋನ್ ನಾಚಿಕೆಯಿಂದ ಒಣಗುತ್ತಿದೆ. ಶಾರೋನ್ ಬೆಂದು ಬೆಂಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಎಲೆಗಳಿಲ್ಲದೆ ಬೋಳಾಗಿವೆ.</verse>
				<verse number="10">ಸರ್ವೇಶ್ವರ ಹೀಗೆನ್ನೆತ್ತಾರೆ: “ಈಗ ಏಳುವೆನು. ಈಗಲೇ ಎದ್ದು ಸಿದ್ಧನಾಗುವೆನು. ಇದೀಗಲೇ ನನ್ನ ಮಹಿಮೆಯನ್ನು ತೋರಿಸುವೆನು.</verse>
				<verse number="11">ನೀವು ಹೊಟ್ಟನ್ನು ಗರ್ಭದಲ್ಲಿ ಬೆಳೆಸಿ ಕೂಳೆಯನ್ನು ಹೆರುವಿರಿ. ನಿಮ್ಮ ನಿಟ್ಟುಸಿರು ನಿಮ್ಮನ್ನೇ ನುಂಗುವ ಬೆಂಕಿಯಾಗುವುದು.</verse>
				<verse number="12">ನೀವು ಸುಟ್ಟ ಸುಣ್ಣದಂತಾಗುವಿರಿ.</verse>
				<verse number="13">ದೂರ ಇರುವವರೇ, ನಾನು ಎಸಗಿದ ಕಾರ್ಯಗಳನ್ನು ಕೇಳಿ ತಿಳಿದುಕೊಳ್ಳಿರಿ. ಹತ್ತಿರ ಇರುವವರೇ, ನನ್ನ ಪರಾಕ್ರಮವನ್ನು ಒಪ್ಪಿಕೊಳ್ಳಿರಿ.”</verse>
				<verse number="14">ಸಿಯೋನಿನಲ್ಲಿರುವ ಪಾಪಾತ್ಮರು ಭಯಪಡುತ್ತಾರೆ. ಭಕ್ತಿಹೀನರು ಗಡಗಡನೆ ನಡುಗುತ್ತಾರೆ. ‘ನಮ್ಮಲ್ಲಿ ಯಾರು ತಾನೇ ಕಬಳಿಸುವ ಕಿಚ್ಚಿನ ಬಳಿ ವಾಸಿಸಬಲ್ಲರು?’ ಎಂದು ಹೇಳಿಕೊಳ್ಳುತ್ತಾರೆ.</verse>
				<verse number="15">ಸನ್ಮಾರ್ಗದಲ್ಲಿ ನಡೆವವನು, ಸತ್ಯವನ್ನೇ ನುಡಿವವನು, ಬಲಾತ್ಕಾರ್ಯದಿಂದ ಲಭಿಸಿದ್ದನ್ನು ತಿರಸ್ಕರಿಸುವವನು, ಲಂಚಕ್ಕೆ ಕೈಚಾಚದೆ ಹಿಂದಕ್ಕೆ ಸರಿವವನು, ಕೊಲೆ ಮಾತುಗಳಿಗೆ ಕಿವಿ ಮುಚ್ಚಿಕೊಳ್ಳುವವನು, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನು - ಇಂಥವನೇ ಉನ್ನತ ಸ್ಥಾನದಲ್ಲಿ ವಾಸಿಸುವನು.</verse>
				<verse number="16">ಅಂಥವನಿಗೆ ಗಿರಿದುರ್ಗವೇ ಆಶ್ರಯ, ಅನ್ನ ಆಹಾರ ಉಚಿತ, ನೀರುನಿಡಿ ನಿಸ್ಸಂದೇಹ.</verse>
				<verse number="17">ಅಲಂಕೃತ ರಾಜನನ್ನು ನಿಮ್ಮ ಕಣ್ಣುಗಳು ಕಾಣುವುವು. ಸವಿಸ್ತಾರವಾದ ನಾಡೊಂದನ್ನು ನಿಮ್ಮ ಕಣ್ಣುಗಳು ನೋಡಿ ನಲಿಯುವುವು.</verse>
				<verse number="18">ಆಗ ನೀವು ಹಿಂದಿನ ಭಯಂಕರವಾದ ವಿಷಯಗಳನ್ನು ಮನಸ್ಸಿಗೆ ತಂದುಕೊಳ್ಳುತ್ತಾ - “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕಮಾಡಿದವನು ಎಲ್ಲಿ? ಗೋಪುರಗಳನ್ನು ಗಣಿಸಿದವನು ಎಲ್ಲಿ?” ಎಂದು ಹೇಳಿಕೊಳ್ಳುವಿರಿ.</verse>
				<verse number="19">ನಿಮಗೆ ತಿಳಿಯಲಾಗದ ಅನ್ಯಭಾಷೆಯನ್ನು, ನೀವು ಗ್ರಹಿಸಲಾಗದ ಅಸ್ಪಷ್ಟ ಮಾತುಗಳನ್ನು ಆಡುವ ಅಹಂಕಾರದ ಜನರನ್ನು ಇನ್ನು ಮೇಲೆ ಕಾಣಲಾರಿರಿ.</verse>
				<verse number="20">ನಮ್ಮ ಹಬ್ಬ ಆಚರಣೆಗಳ ನಗರವಾದ ಸಿಯೋನನ್ನು ದೃಷ್ಟಿಸಿನೋಡಿ. ಆ ಜೆರುಸಲೇಮನ್ನು ಕಣ್ಣಿಟ್ಟು ನೋಡಿ. ಅದು ನೆಮ್ಮದಿಯ ನಿವಾಸವಾಗಿ, ಕೀಳಲಾಗದ, ಕೆಡವಲಾಗದ ದೃಢವಾದ ಗುಡಾರದಂತೆ ನಿಂತಿರುವುದನ್ನು ನೀವು ಕಣ್ಣಾರೆ ಕಾಣುವಿರಿ.</verse>
				<verse number="21">ಅಲ್ಲಿ ಸರ್ವೇಶ್ವರ ತಮ್ಮ ಶಕ್ತಿಯನ್ನು ತೋರ್ಪಡಿಸುವರು. ನದಿಸರೋವರಗಳಂತೆ ನಮ್ಮನ್ನು ಸುತ್ತುವರಿಯುವರು. ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡದಾದ ಹಡಗಾಗಲಿ ಅದನ್ನು ದಾಟವು.</verse>
				<verse number="22">ಸರ್ವೇಶ್ವರ ಸ್ವಾಮಿಯೇ ನಮ್ಮ ನ್ಯಾಯಾಧಿಪತಿ, ಸರ್ವೇಶ್ವರ ಸ್ವಾಮಿಯೇ ನಮಗೆ ಶಾಸನದಾಯಕ, ಸರ್ವೇಶ್ವರ ಸ್ವಾಮಿಯೇ ನಮ್ಮ ರಾಜ. ಅವರೇ ನಮ್ಮ ಉದ್ಧಾರಕ.</verse>
				<verse number="23">ಶತ್ರು ಹಡಗುಗಳ ಹಗ್ಗಗಳು ಸಡಿಲ, ಅದರ ಕೂವೆಯ ಬುಡ ಸಡಿಲ; ಅದರ ಹಾಯಿಯನ್ನು ಮುದುರದಂತೆ ಹಿಡಿದುಕೊಳ್ಳಲು ಅಸಾಧ್ಯ. ಅವುಗಳನ್ನು ಸೂರೆಮಾಡಿ ಕೊಳ್ಳೆಹೊಡೆದು, ಸಮನಾಗಿ ಹಂಚಿಕೊಳ್ಳಲು ಎಲ್ಲರಿಗೂ ಆಸ್ಪದವುಂಟು. ಕುಂಟರು ಕೂಡ ತಮ್ಮ ಪಾಲನ್ನು ಪಡೆಯಬಲ್ಲರು.</verse>
				<verse number="24">ಸಿಯೋನಿನ ಯಾವ ನಿವಾಸಿಯೂ, “ನಾನು ಅಸ್ವಸ್ಥನು” ಎಂದು ಹೇಳನು, ಅಲ್ಲಿಯ ಜನರ ಪಾಪವು ಪರಿಹಾರವಾಗುವುದು.</verse>
			</chapter>
			<chapter number="34">
				<verse number="1">ರಾಷ್ಟ್ರಗಳೇ, ಬನ್ನಿ, ಹತ್ತಿರಕ್ಕೆ ಬಂದು ಕೇಳಿರಿ; ಜನಾಂಗಗಳೇ, ಕಿವಿಗೊಡಿರಿ; ಜಗವೂ ಅದರಲ್ಲಿರುವ ಸಮಸ್ತವೂ, ಲೋಕವೂ ಅದರ ನಿವಾಸಿಗಳೆಲ್ಲರೂ ಆಲಿಸಲಿ.</verse>
				<verse number="2">ಸರ್ವೇಶ್ವರ ಸ್ವಾಮಿ ಸಕಲ ರಾಷ್ಟ್ರಗಳ ಮೇಲೆ ಕೋಪಗೊಂಡಿದ್ದಾರೆ - ಅವುಗಳ ಸೈನ್ಯಗಳ ಮೇಲೆ ರೋಷಗೊಂಡಿದ್ದಾರೆ. ಅವರನ್ನು ಕೊಲೆಗೆ ಈಡುಮಾಡಿ ಸಂಪೂರ್ಣವಾಗಿ ಸಂಹರಿಸಲು ನಿಶ್ಚಯಿಸಿದ್ದಾರೆ.</verse>
				<verse number="3">ಅವರಲ್ಲಿ ಹತರಾದವರು ಬೀದಿಪಾಲಾಗುವರು, ಅವರ ಶವಗಳಿಂದ ದುರ್ವಾಸನೆಯು ಬಡಿಯುವುದು. ಅವರ ರಕ್ತಪ್ರವಾಹವು ಗುಡ್ಡಗಳನ್ನು ತೋಯಿಸುವುದು.</verse>
				<verse number="4">ಗಗನದ ನಕ್ಷತ್ರವ್ಯೂಹವು ಕ್ಷಯಿಸುವುದು, ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆಗಳು ಒಣಗಿಬೀಳುವಂತೆ, ಅಂಜೂರದ ತರಗುಗಳು ಉದುರುವಂತೆ ತಾರಾಮಂಡಲವೆಲ್ಲ ಕಳಚಿಬೀಳುವುದು.</verse>
				<verse number="5">ಆಕಾಶದಲ್ಲಿ ನನ್ನ ಖಡ್ಗವು ಆವೇಶದಿಂದ ಕಾರ್ಯಮಾಡಿದೆ. ಇಗೋ, ನಾನು ಶಪಿಸಿದ ಎದೋಮ್ ಎಂಬ ಜನಾಂಗದ ಮೇಲೆ ನ್ಯಾಯತೀರಿಸಲು ಅದು ಎರಗಲಿದೆ.</verse>
				<verse number="6">ಸರ್ವೇಶ್ವರ ಸ್ವಾಮಿಯ ಖಡ್ಗವು ರಕ್ತಮಯವಾಗಿದೆ; ಅದು ಕೊಬ್ಬಿನಿಂದಲೂ ಕುರಿಹೋತಗಳ ರಕ್ತದಿಂದಲೂ ಟಗರುಗಳ ಮೂತ್ರಪಿಂಡಗಳ ವಪೆಯಿಂದಲೂ ತುಂಬಿದೆ; ಸರ್ವೇಶ್ವರ ಬೊಚ್ರದಲ್ಲಿ ಈ ಬಲಿಯನ್ನೂ ಎದೋಮಿನಲ್ಲಿ ಈ ದೊಡ್ಡ ಸಂಹಾರವನ್ನೂ ಮಾಡಬೇಕೆಂದಿದ್ದಾರೆ.</verse>
				<verse number="7">ಕಾಡುಕೋಣಗಳಂತೆ, ಹೋರಿಗೂಳಿಗಳಂತೆ, ಈ ಯಜ್ಞಪಶುಗಳು ಬೀಳುವುವು; ನಾಡು ರಕ್ತದಿಂದು ತೊಯಿದಿರುವುದು, ಅಲ್ಲಿನ ದೂಳು ಕೊಬ್ಬಿನಿಂದ ಜಿಡ್ಡಾಗಿರುವುದು.</verse>
				<verse number="8">ಏಕೆಂದರೆ ಸರ್ವೇಶ್ವರ ಮುಯ್ಯಿತೀರಿಸುವ ದಿನವು ಬಂದಿದೆ. ಸಿಯೋನಿಗೆ ನ್ಯಾಯ ದೊರಕಿಸಿ ಎದೋಮಿಗೆ ದಂಡನೆ ವಿಧಿಸುವ ವರ್ಷವು ಒದಗಿದೆ.</verse>
				<verse number="9">ಎದೋಮಿನ ತೊರೆಗಳು ಡಾಂಬರಾಗಿ ಹರಿಯುವುವು. ಅದರ ಮಣ್ಣು ಗಂಧಕವಾಗುವುದು, ನಾಡೆಲ್ಲಾ ಉರಿಯುವ ಡಾಂಬರಿನಂತೆ ಇರುವುದು.</verse>
				<verse number="10">ಅದು ಹಗಲಿರುಳು ಆರದೆ ಉರಿಯುವುದು. ಅದರ ಹೊಗೆ ನಿರಂತರವಾಗಿ ಏರುತ್ತಿರುವುದು. ನಾಡು ತಲತಲಾಂತರಕ್ಕೂ ಹಾಳುಬಿದ್ದಿರುವುದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದುಹೋಗರು.</verse>
				<verse number="11">ಅದು ಹದ್ದುಗಳ, ಮುಳ್ಳುಹಂದಿಗಳ ಸ್ವಾಧೀನವಾಗುವುದು. ಕಾಗೆಗೂಗೆಗಳಿಗೆ ಅದು ಗೂಡಾಗುವುದು. ಸರ್ವೇಶ್ವರ ಹಾಳುಪಾಳನ್ನೇ ಅದರ ಅಳತೆಗೋಲನ್ನಾಗಿಯೂ ಅಸ್ತವ್ಯಸ್ತತೆಯನ್ನೇ ಅದರ ಮಟ್ಟಗೋಲನ್ನಾಗಿಯೂ ಮಾಡುವರು.</verse>
				<verse number="12">ಅಲ್ಲಿ ಪಟ್ಟಕ್ಕೆ ಪ್ರಮುಖರಾರೂ ಸಿಕ್ಕರು, ನಾಡಿಗೆ ಒಡೆಯರಾರೂ ಇಲ್ಲದಾಗುವರು.</verse>
				<verse number="13">ಅಲ್ಲಿನ ಅರಮನೆಗಳಲ್ಲಿ ಕಳ್ಳಬಳ್ಳಿಗಳೂ ಕೋಟೆಗಳಲ್ಲಿ ಮುಳ್ಳುಗಿಳ್ಳುಗಳೂ ಹಬ್ಬಿಕೊಳ್ಳುವುವು. ಅದು ಮರಿಗಳಿಗೆ ಗುಹೆಯಾಗಿಯೂ ಗೂಬೆಗಳಿಗೆ ಗೂಡಾಗಿಯೂ ಇರುವುದು.</verse>
				<verse number="14">ಕಾಡುನಾಯಿಗಳೂ ತೋಳಗಳೂ ಅಲ್ಲಿ ಸೇರುವುವು; ಕಾಡುಮೇಕೆ ತನ್ನ ಜೊತೆ ಮೇಕೆಯನ್ನು ಕರೆದು ಕೂಗುವುದು; ಭೂತಪ್ರೇತಗಳು ಅಲ್ಲಿ ಹಾಯಾಗಿ ವಾಸಮಾಡುವುವು.</verse>
				<verse number="15">ಹಾರುವ ಹಾವು ಅಲ್ಲಿ ಗೂಡುಮಾಡಿಕೊಂಡು, ಮೊಟ್ಟೆಯಿಕ್ಕಿ ಮರಿಮಾಡಿ, ರೆಕ್ಕೆಗಳ ಅಡಿಯಲ್ಲಿ ಅವುಗಳನ್ನು ಕೂಡಿಸಿಕೊಳ್ಳುವುದು. ರಣಹದ್ದುಗಳು ಅಲ್ಲಿ ಜೋಡಿಜೋಡಿಯಾಗಿ ಸೇರಿಕೊಳ್ಳುವುವು.</verse>
				<verse number="16">ಸರ್ವೇಶ್ವರ ಸ್ವಾಮಿಯ ಗ್ರಂಥದಲ್ಲಿ ಬರೆದಿರುವುದನ್ನು ಹುಡುಕಿ ಓದಿರಿ. ಆ ಸೃಷ್ಟಿಗಳಲ್ಲಿ ಯಾವುದೂ ಇಲ್ಲದಿರದು. ಎಲ್ಲವು ಜೊತೆಜೊತೆಯಾಗಿ ಇರುವುವು. ಸ್ವಾಮಿಯ ಬಾಯಿಂದ ಅಪ್ಪಣೆ ಆಯಿತು, ಅವರ ಆತ್ಮವು ಅವುಗಳನ್ನು ಒಟ್ಟಿಗೆ ಬರಮಾಡಿತು.</verse>
				<verse number="17">ಅವರೇ, ಇವುಗಳಿಗೆ ಹಂಚಿಕೊಟ್ಟಿದ್ದಾರೆ, ಅವರ ಕೈಯೇ ನೂಲುಹಿಡಿದು ನಾಡನ್ನು ಇವುಗಳಿಗೆ ವಿಭಾಗಮಾಡಿದೆ; ಅದು ಇವುಗಳಿಗೆ ಶಾಶ್ವತ ಸೊತ್ತಾಗುವುದು, ತಲತಲಾಂತರಕ್ಕೂ ಅವು ಅಲ್ಲಿ ವಾಸಮಾಡುವುವು.</verse>
			</chapter>
			<chapter number="35">
				<verse number="1">ಆನಂದಿಸಲಿ ಅರಣ್ಯವೂ ಮರುಭೂಮಿಯೂ ಹೂಗಳಂತೆ ಅರಳಿ ಹರ್ಷಿಸಲಿ ಒಣನೆಲವು.</verse>
				<verse number="2">ಉಲ್ಲಾಸಿಸಲಿ ಅದು ಹುಲುಸಾಗಿ ಹೂಬಿಟ್ಟು ಹೌದು, ಸಂತಸ ಸಂಗೀತ ಹಾಡುವಷ್ಟು, ದೊರಕಲಿ ಅದಕ್ಕೆ ಲೆಬನೋನಿನ ಮಹಿಮೆಯು ಕರ್ಮೆಲಿನ ಮತ್ತು ಶಾರೋನಿನ ವೈಭವವು. ಕಾಣುವುವು ಸರ್ವೇಶ್ವರನ ಮಹಿಮೆಯನು ನೋಡುವುವು ಇವೆಲ್ಲ ನಮ್ಮ ದೇವರ ವೈಭವವನು.</verse>
				<verse number="3">ಜೋಲುಬಿದ್ದ ಕೈಗಳನ್ನು ಬಲಗೊಳಿಸಿರಿ ನಡುಗುವ ಕಾಲುಗಳನ್ನು ದೃಢಗೊಳಿಸಿರಿ.</verse>
				<verse number="4">ಚಂಚಲ ಹೃದಯರಿಗೆ ಹೀಗೆಂದು ಹೇಳಿ: “ಭಯಪಡಬೇಡಿ; ಎದೆಗುಂದಬೇಡಿ; ಬರುವನು ಆ ದೇವನು ಮುಯ್ಯಿತೀರಿಸಲು ಬರುವನು ಆ ದೇವನು ಪ್ರತೀಕಾರವೆಸಗಲು ತಾನೇ ಬರುವನು ನಿಮ್ಮನ್ನು ರಕ್ಷಿಸಲು.”</verse>
				<verse number="5">ಕುರುಡರ ಕಣ್ಣು ಕಾಣುವುದಾಗ ಕಿವುಡರ ಕಿವಿ ತೆರೆಯುವುದಾಗ.</verse>
				<verse number="6">ಜಿಗಿಯುವನು ಕುಂಟನು ಜಿಂಕೆಯಂತೆ ಹಾಡುವುದು ಮೂಕನ ನಾಲಿಗೆ ಹರ್ಷಗೀತೆ. ಒರತೆಗಳು ಒಡೆಯುವುವು ಅರಣ್ಯದಲಿ ನದಿಗಳು ಹುಟ್ಟಿಹರಿಯುವುವು ಒಣನೆಲದಲಿ.</verse>
				<verse number="7">ಸರೋವರವಾಗುವುದಾ ಉರಿಗಾಡು ಬುಗ್ಗೆಯಾಗುವುದಾ ಬುವಿ ಬರಡು. ನರಿಗಳು ನಿವಾಸಿಸುವ ಗುಹೆಗಳು ಆಗುವುವು ಹುಲುಸಾದ ಹುಲ್ಲುಗಾವಲುಗಳು.</verse>
				<verse number="8">ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.</verse>
				<verse number="9">ಅಲ್ಲಿರದು ಸಿಂಹ ಸಿಂಹಿಣಿ, ಅಲ್ಲಿ ಸೇರದು ಕ್ರೂರ ಪ್ರಾಣಿ. ಕಾಣಸಿಗದಲ್ಲಿ ಇದಾವ ಹಾನಿ, ಪಾಪವಿಮುಕ್ತರೇ ನಡೆವರಲ್ಲಿ.</verse>
				<verse number="10">ಹಿಂದಿರುಗುವರು ಸರ್ವೇಶ್ವರನಿಂದ ವಿಮೋಚನೆ ಪಡೆದವರು ಜಯಜಯಕಾರದೊಂದಿಗೆ ಸಿಯೋನನು ಸೇರುವರು. ನಿತ್ಯಾನಂದ ಸುಖವಿರುವುದು ಕಿರೀಟಪ್ರದವಾಗಿ ಸಿಗುವುದವರಿಗೆ ಹರ್ಷಾನಂದದ ಸವಿ ತೊಲಗುವುದು ದುಃಖದುಗುಡದ ಕಹಿ.</verse>
			</chapter>
			<chapter number="36">
				<verse number="1">ಅರಸ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ, ಅಸ್ಸೀರಿಯದ ಅರಸ ಸನ್ಹೇರೀಬನು ಬಂದು ಜುದೇಯ ಪ್ರಾಂತ್ಯದ ಸುಭದ್ರ ಪಟ್ಟಣಗಳನ್ನೆಲ್ಲಾ ಸ್ವಾಧೀನಮಾಡಿಕೊಂಡನು.</verse>
				<verse number="2">ಬಳಿಕ ಅವನು ಲಾಕೀಷಿನಿಂದ ರಬ್ಷಾಕೆ ಎಂಬ ಒಬ್ಬ ದಳಪತಿಯನ್ನು ಮಹಾಸೈನ್ಯದೊಂದಿಗೆ ಜೆರುಸಲೇಮಿನಲ್ಲಿದ್ದ ರಾಜ ಹಿಜ್ಕೀಯನ ಬಳಿಗೆ ಕಳುಹಿಸಿದನು. ಈ ದಳಪತಿ ಅಗಸರ ಹೊಲದ ಮೇಲೆ ಹಾದುಹೋಗುವ ರಾಜಮಾರ್ಗದ ಹತ್ತಿರವಿರುವ ಕೆರೆಯ ಕಾಲುವೆಯ ಬಳಿ ಪಾಳೆಯ ಮಾಡಿಕೊಂಡನು.</verse>
				<verse number="3">ಆಮೇಲೆ ಹಿಲ್ಕೀಯನ ಮಗನೂ ರಾಜಗೃಹಾಧಿಪತಿಯೂ ಆದ ಎಲ್ಯಾಕೀಮ್, ಕಾರ್ಯದರ್ಶಿಯಾದ‍ ಶೆಬ್ನ ಮತ್ತು ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬ ಮೂವರು ಅಲ್ಲಿಗೆ ಬಂದರು.</verse>
				<verse number="4">ದಳಪತಿ ಅವರಿಗೆ, “ನೀವು ಹೋಗಿ ಅಸ್ಸೀರಿಯದ ಮಹಾರಾಜನ ಈ ಮಾತುಗಳನ್ನು ಹಿಜ್ಕೀಯನಿಗೆ ತಿಳಿಸಿರಿ: “ನಿನ್ನ ಭರವಸೆಗೆ ಆಧಾರವಾದರೂ ಏನು?</verse>
				<verse number="5">ಯುದ್ಧಕ್ಕೆ ಬೇಕಾದ ವಿವೇಕ ಹಾಗೂ ಶಕ್ತಿ ಉಂಟೆಂಬ ನಿನ್ನ ಮಾತು ಬರೀ ಬಾಯಿಮಾತು ಎಂದು ನಾನು ಹೇಳಬಲ್ಲೆ. ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ಎದ್ದಿರುವೆ?</verse>
				<verse number="6">ಮುರಿದ ಜೊಂಡಿಗೆ ಸಮಾನವಾದ ಈಜಿಪ್ಟ್ ಎಂಬ ಊರುಗೋಲಿನ ಮೇಲೆ ನಿನಗೆ ಭರವಸೆಯಿದೆಯಷ್ಟೆ. ಆದರೆ ಅದು ಊರಿಕೊಳ್ಳುವವನ ಕೈಯನ್ನು ಚುಚ್ಚಿ ತಿವಿಯುವ ಕೋಲು. ಈಜಿಪ್ಟಿನ ರಾಜ ಫರೋಹನಲ್ಲಿ ಭರವಸೆಯಿಟ್ಟವರಿಗೆ ಆಗುವ ಗತಿ ಇದೇ.</verse>
				<verse number="7">‘ಬಹುಶಃ, ನೀನು ‘ನಮ್ಮ ದೇವರಾದ ಸರ್ವೇಶ್ವರನನ್ನೇ ನಂಬಿಕೊಂಡಿದ್ದೇವೆ’, ಎಂದು ಹೇಳಬಹುದು. ಹಿಜ್ಕೀಯನು, ಇದೇ ಬಲಿಪೀಠದ ಮುಂದೆ ಆರಾಧನೆಮಾಡಬೇಕು ಎಂದು ಯೆಹೂದ್ಯರಿಗೆ ಮತ್ತು ಜೆರುಸಲೇಮಿನವರಿಗೆ ಆಜ್ಞಾಪಿಸಿ ಆ ಸರ್ವೇಶ್ವರ ಸ್ವಾಮಿಯ ಪೂಜಾಸ್ಥಳಗಳನ್ನೂ ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೆ?</verse>
				<verse number="8">ಆದುದರಿಂದ ಬಾ, ಎಂದು ನನ್ನ ಒಡೆಯನಾದ ಅಸ್ಸೀರಿಯದ ಅರಸನೊಂದಿಗೆ ಒಂದು ಒಪ್ಪಂದ ಮಾಡಿಕೊ. ಅವನು ನಿನಗೆ ಎರಡು ಸಾವಿರ ಕುದುರೆಗಳನ್ನು ಕೊಡುವನು; ಅವುಗಳ ಮೇಲೆ ಕೂರಿಸುವಷ್ಟು ಮಂದಿ ಸವಾರರು ನಿನಗಿದ್ದಾರೋ?</verse>
				<verse number="9">ಇದು ಕೂಡ ನಿನಗೆ ಅಸಾಧ್ಯವಾದರೆ ನನ್ನ ಒಡೆಯನ ಸೇನಾಪತಿಗಳಲ್ಲಿ ಅತ್ಯಲ್ಪನನ್ನಾದರೂ ಸೋಲಿಸುವುದು ಹೇಗೆ? ರಥಾಶ್ವಬಲಗಳಿಗಾಗಿ ಈಜಿಪ್ಟಿನವರನ್ನು ನೀನು ನಂಬಿಕೊಂಡಿರುವಂತೆ ಕಾಣುತ್ತದೆ.</verse>
				<verse number="10">ಈ ನಾಡನ್ನು ಹಾಳುಮಾಡುವುದಕ್ಕೆ ಸರ್ವೇಶ್ವರ ಸ್ವಾಮಿಯ ಒಪ್ಪಿಗೆಯಿಲ್ಲದೆ ಇಲ್ಲಿಗೆ ನಾನು ಬಂದೆನೆಂದು ನೆನಸುತ್ತೀಯೋ? ‘ಇಲ್ಲಿಗೆ ಬಂದು ಇದನ್ನು ಹಾಳುಮಾಡಿಬಿಡು’ ಎಂದು ಆ ಸರ್ವೇಶ್ವರ ಸ್ವಾಮಿಯೇ ನಿನಗೆ ಆಜ್ಞೆಮಾಡಿದ್ದಾರೆ,’ ಎಂಬ ಈ ಮಾತುಗಳು ಅರಸನ ಮಾತುಗಳೆಂದು ಹೋಗಿ ತಿಳಿಸಿರಿ” ಎಂದನು.</verse>
				<verse number="11">ಆಗ ಎಲ್ಯಾಕೀಮ್, ಶೆಬ್ನ ಮತ್ತು ಯೋವ ಎಂಬವರು ಆ ದಳಪತಿಗೆ, “ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಆರಾಮಾಯಿಕ ಭಾಷೆಯಲ್ಲಿ ಮಾತನಾಡಿ, ಅದು ನಮಗೆ ಅರ್ಥವಾಗುತ್ತದೆ. ಆದರೆ ಹಿಬ್ರು ಭಾಷೆಯಲ್ಲಿ ಮಾತನಾಡಬೇಡಿ, ಅದು ಪೌಳಿಗೋಡೆಯ ಮೇಲಿರುವ ಎಲ್ಲರಿಗೂ ಅರ್ಥವಾಗುತ್ತದೆ,” ಎಂದರು.</verse>
				<verse number="12">ಅದಕ್ಕೆ ಆ ದಳಪತಿಯು, “ನನ್ನ ಯಜಮಾನನು, ನಿಮ್ಮ ಸಂಗಡವಾಗಲಿ ಮತ್ತು ನಿಮ್ಮ ಒಡೆಯರ ಸಂಗಡವಾಗಲಿ ಮಾತ್ರ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಮಗೆ ವಿರುದ್ಧವಾಗಿ ಹೋರಾಡಿದರೆ ನಿಮ್ಮ ಹಾಗೆ ಇವರು ಕೂಡ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ” ಎಂದು ಉತ್ತರಕೊಟ್ಟನು.</verse>
				<verse number="13">ಬಳಿಕ ಆ ದಳಪತಿಯು ಆ ಗೋಡೆಯ ಮೇಲೆ ನಿಂತಿದ್ದವರನ್ನು ಉದ್ದೇಶಿಸಿ ಹಿಬ್ರು ಭಾಷೆಯಲ್ಲಿ, “ನೀವು ಅಸ್ಸೀರಿಯದ ರಾಜಾಧಿರಾಜನ ಮಾತನ್ನು ಕೇಳಿರಿ;</verse>
				<verse number="14">ಹಿಜ್ಕೀಯನ ಮಾತನ್ನು ಕೇಳಿ ಮೋಸಹೋಗಬೇಡಿ; ನಿಮ್ಮನ್ನು ಬಿಡಿಸಲು ಅವನಿಂದಾಗದು.</verse>
				<verse number="15">ಹಿಜ್ಕೀಯನು ನಿಮಗೆ, ‘ಸರ್ವೇಶ್ವರ ಸ್ವಾಮಿಯಲ್ಲಿ ನಂಬಿಕೆಯಿಡಿ; ಅವರು ನಿಮ್ಮನ್ನು ಹೇಗಾದರೂ ಮಾಡಿ ರಕ್ಷಿಸುವರು; ಈ ಪಟ್ಟಣವು ಅಸ್ಸೀರಿಯದ ರಾಜನ ವಶವಾಗುವುದಿಲ್ಲ,’ ಎಂಬುದಾಗಿ ಹೇಳಿದರೆ ಅವನಿಗೆ ಕಿವಿಗೊಡಬೇಡಿ, ಒಪ್ಪಿಕೊಳ್ಳಬೇಡಿ.</verse>
				<verse number="16">ಅಸ್ಸೀರಿಯದ ಅರಸನಾದ ನನ್ನ ಒಡೆಯನ ಮಾತನ್ನು ಕೇಳಿ; ಆತನೊಡನೆ ಒಪ್ಪಂದ ಮಾಡಿಕೊಂಡು ಆತನ ಆಶ್ರಯವನ್ನು ಸೇರಿರಿ. ಆಗ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಅಂಜೂರಮರದ ಹಾಗೂ ದ್ರಾಕ್ಷಾಲತೆಯ ಹಣ್ಣುಗಳನ್ನು ತಿನ್ನುವನು; ತನ್ನ ಬಾವಿಯ ನೀರನ್ನು ಕುಡಿಯುವನು.</verse>
				<verse number="17">ಸ್ವಲ್ಪ ಕಾಲವಾದನಂತರ ಆತನು ಬಂದು ನಿಮ್ಮನ್ನು ಇನ್ನೊಂದು ನಾಡಿಗೆ ಕರೆದುಕೊಂಡು ಹೋಗುವನು. ಅಲ್ಲಿ ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ ಇವು ಸಮೃದ್ಧಿಯಾಗಿರುವುವು, ನಿಮ್ಮ ನಾಡಿಗೆ ಸರಿಸಮಾನವಾಗಿರುವುವು;</verse>
				<verse number="18">‘ಸರ್ವೇಶ್ವರ ನಮ್ಮನ್ನು ರಕ್ಷಿಸುವರು’ ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಮೂಡಿಸದಂತೆ ಎಚ್ಚರಿಕೆಯಾಗಿರಿ. ಯಾವ ರಾಷ್ಟ್ರದ ದೇವರುಗಳು ತಾನೇ ಅಸ್ಸೀರಿಯದ ಅರಸನ ಕೈಯಿಂದ ನಾಡನ್ನು ಬಿಡಿಸಿಕೊಂಡಿದ್ದಾರೆ?</verse>
				<verse number="19">ಹಮಾತ್, ಅರ್ಪಾದ್, ಸೆಫರ್ವಯಿಮ್ ಎಂಬ ಊರುಗಳ ದೇವರುಗಳು ಏನಾದರು? ಅವರು ಸಮಾರ್ಯವನ್ನು ನನ್ನ ಅರಸನ ಕೈಯಿಂದ ಬಿಡಿಸಿಕೊಂಡರೋ?</verse>
				<verse number="20">ಯಾವ ರಾಷ್ಟ್ರದ ದೇವರುಗಳೂ ತಮ್ಮ ನಾಡನ್ನು ನನ್ನ ಅರಸನ ಕೈಯಿಂದ ಬಿಡಿಸಲಾರದೆ ಹೋದಮೇಲೆ ಸರ್ವೇಶ್ವರ ಜೆರುಸಲೇಮನ್ನು ಆತನ ಕೈಯಿಂದ ಬಿಡಿಸಿ ಕಾಪಾಡಲು ಸಾಧ್ಯವೋ?’ ಎಂದು ಕೇಳಿದನು.</verse>
				<verse number="21">ಆ ಸೇನಾಧಿಪತಿಗೆ ಯಾವ ಉತ್ತರವನ್ನು ಕೊಡಬಾರದೆಂದು ರಾಜ ಹಿಜ್ಕೀಯನು ಆಜ್ಞಾಪಿಸಿದ್ದರಿಂದ ಆ ಮೂವರು ಏನನ್ನು ಹೇಳದೆ ಸುಮ್ಮನಿದ್ದರು.</verse>
				<verse number="22">ಬಳಿಕ, ಹಿಲ್ಕೀಯನ ಮಗನೂ ರಾಜ ಗೃಹಾಧಿಪತಿಯೂ ಆಗಿದ್ದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಆಸಾಫನ ಮಗನೂ ಮಂತ್ರಿಯೂ ಆಗಿದ್ದ ಯೋವ ಎಂಬವರು ಸಿಟ್ಟಿನಿಂದ ಬಟ್ಟೆಗಳನ್ನು ಹರಿದುಕೊಂಡು, ಅರಸ ಹಿಜ್ಕೀಯನ ಬಳಿಗೆ ಬಂದು, ಅವನಿಗೆ ಆ ಸೇನಾಪತಿಯ ಮಾತುಗಳನ್ನು ತಿಳಿಸಿದರು.</verse>
			</chapter>
			<chapter number="37">
				<verse number="1">ಈ ವರದಿಯನ್ನು ಕೇಳಿದ ಹಿಜ್ಕೀಯನು ಕೂಡ ಬಟ್ಟೆಯನ್ನು ಹರಿದುಕೊಂಡು, ಗೋಣಿತಟ್ಟನ್ನು ಕಟ್ಟಿಕೊಂಡು, ಸರ್ವೇಶ್ವರ ಸ್ವಾಮಿಯ ಆಲಯಕ್ಕೆ ಹೋದನು.</verse>
				<verse number="2">ಇದಲ್ಲದೆ, ಅವನು ರಾಜಗೃಹಾಧಿಪತಿಯಾದ ಎಲ್ಯಾಕೀಮ್, ಕಾರ್ಯದರ್ಶಿ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ: “ನೀವು ಗೋಣಿತಟ್ಟನ್ನು ಕಟ್ಟಿಕೊಂಡು, ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನ ಬಳಿಗೆ ಹೋಗಿ</verse>
				<verse number="3">ಅವನಿಗೆ ಹೀಗೆಂದು ಹೇಳಿ: ‘ಈ ದಿನ ನಮಗೆ ಮಹಾಸಂಕಟದ ದಿನ, ದಂಡನೆಯ ದಿನ, ನಿಂದೆ ಅವಮಾನದ ದಿನ. ಹೆರಿಗೆಯ ಕಾಲ ಬಂದಿದೆ, ಆದರೆ ಹೆರುವುದಕ್ಕೆ ಶಕ್ತಿ ಸಾಲದು.</verse>
				<verse number="4">ಅಸ್ಸೀರಿಯದ ಅರಸನಿಂದ ಬಂದಿರುವ ಸೇನಾಪತಿ ಆಡಿದ ಮಾತುಗಳನ್ನು ನಿನ್ನ ದೇವರಾದ ಸರ್ವೇಶ್ವರ ಕೇಳಿದ್ದಾರೆ. ಆ ಸೇನಾಪತಿ ತನ್ನ ಒಡೆಯನ ಹೆಸರಿನಲ್ಲಿ ಜೀವಸ್ವರೂಪರಾದ ಆ ದೇವರನ್ನು ದೂಷಿಸಿದ್ದಾನೆ. ಅವನಿಗೆ ತಕ್ಕ ದಂಡನೆಯಾಗಬೇಕು. ಹೀಗಿರಲು ಅಳಿದುಳಿದಿರುವ ಜನರಿಗಾಗಿ ದೇವರನ್ನು ನೀನು ಪ್ರಾರ್ಥನೆ ಮಾಡಬೇಕೆಂದು ಹಿಜ್ಕೀಯ ಕೇಳಿಕೊಂಡಿದ್ದಾನೆ,’ ಎಂದು ತಿಳಿಸಿ.”</verse>
				<verse number="5">ಅರಸ ಹಿಜ್ಕೀಯನ ಸೇವಕರು ತನ್ನ ಬಳಿಗೆ ಬಂದು ವರದಿಮಾಡಿದ ಮೇಲೆ ಯೆಶಾಯನು,</verse>
				<verse number="6">“ನೀವು ಹಿಂದಿರುಗಿ ಹೋಗಿ ನಿಮ್ಮ ರಾಜನಿಗೆ ಹೀಗೆಂದು ತಿಳಿಸಿರಿ: ‘ಇದು ಸರ್ವೇಶ್ವರನ ನುಡಿ: ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿ ಆಡಿದ ಮಾತುಗಳನ್ನು ಕೇಳಿದ್ದೇನೆ. ಅವುಗಳಿಗಾಗಿ ನೀನು ಹೆದರಬೇಕಾಗಿಲ್ಲ.</verse>
				<verse number="7">ಅವನ ಮೇಲೆ ಭಯಾತ್ಮನನ್ನು ಬರಮಾಡುವೆನು, ಅವನ ಒಂದು ಸುದ್ದಿಯನ್ನು ಕೇಳಿ ಸ್ವದೇಶಕ್ಕೆ ಹಿಂದಿರುಗಿ ಅಲ್ಲೆ ಕತ್ತಿಗೆ ತುತ್ತಾಗುವಂತೆ ಮಾಡುವೆನು.”</verse>
				<verse number="8">ಅಸ್ಸೀರಿಯದ ಸೇನಾಪತಿಯು ತನ್ನ ಅರಸನು ಲಾಕೀಷನ್ನು ಬಿಟ್ಟು ಲಿಬ್ನಕ್ಕೆ ಹೋಗಿ ಆ ರಾಜ್ಯದ ವಿರುದ್ಧ ಯುದ್ಧಮಾಡುತ್ತಿರುವುದಾಗಿ ಸಮಾಚಾರ ಪಡೆದನು. ಆದುದರಿಂದ ಅವನು ಅಲ್ಲಿಗೆ ತೆರಳಿದನು.</verse>
				<verse number="9">ಅಷ್ಟರಲ್ಲೆ ಸುಡಾನಿನ ಅರಸ ತಿರ್ಹಾಕನು ತನಗೆ ವಿರುದ್ಧವಾಗಿ ಹೊರಟಿದ್ದಾನೆ ಎಂಬ ಸುದ್ದಿ ಅಸ್ಸೀರಿಯದ ಅರಸನಿಗೆ ಮುಟ್ಟಿತು. ಆಗ ಅವನು ಜುದೇಯದ ಅರಸ ಹಿಜ್ಕೀಯನಿಗೆ,</verse>
				<verse number="10">“ಜೆರುಸಲೇಮ್ ನನ್ನ ವಶವಾಗುವುದಿಲ್ಲವೆಂದು ನೀನು ನಂಬುವ ದೇವರು ಹೇಳಿ, ನಿನ್ನನ್ನು ಮೋಸಗೊಳಿಸಿದ್ದಾನೆ.</verse>
				<verse number="11">ಅಸ್ಸೀರಿಯದ ಅರಸನು ಎಲ್ಲಾ ರಾಜ್ಯಗಳನ್ನು ಸಂಪೂರ್ಣವಾಗಿ ನಾಶಮಾಡಿದ್ದಾನೆಂಬ ಸಮಾಚಾರ ನಿನಗೆ ಮುಟ್ಟಿರಬೇಕು. ಹೀಗಿರುವಲ್ಲಿ ನೀನು ಮಾತ್ರ ತಪ್ಪಿಸಿಕೊಳ್ಳುವಿಯೋ?</verse>
				<verse number="12">ನನ್ನ ತಂದೆ ತಾತಂದಿರು ಗೋಜಾನ್, ಹಾರನ್, ರೆಚೆಪ್ ಎಂಬ ನಗರಗಳ ಜನರನ್ನು ಮತ್ತು ತೆಲಸ್ಸಾರ್ ಪ್ರಾಂತ್ಯದಲ್ಲಿರುವ ಎದೆನಿನ ಜನರನ್ನು ನಾಶಮಾಡಿದರು. ಆಗ ಅವರ ದೇವರುಗಳು ಅವರನ್ನು ರಕ್ಷಿಸಲಾಗಲಿಲ್ಲ.</verse>
				<verse number="13">ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ್ ಮತ್ತು ಇವ್ವಾ ಎಂಬ ನಗರಗಳ ಅರಸರ ಗತಿ ಏನಾಯಿತು?” ಎಂದು ಪತ್ರ ಬರೆದು ದೂತರ ಸಮೇತ ಕಳುಹಿಸಿದನು.</verse>
				<verse number="14">ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ, ದೇವಾಲಯಕ್ಕೆ ಹೋಗಿ ಅದನ್ನು ಸರ್ವೇಶ್ವರ ಸ್ವಾಮಿಯ ಮುಂದೆ ತೆರೆದಿಟ್ಟು,</verse>
				<verse number="15">ಹೀಗೆಂದು ಪ್ರಾರ್ಥನೆ ಮಾಡಿದನು:</verse>
				<verse number="16">“ಇಸ್ರಯೇಲಿನ ದೇವರೇ, ಸೇನಾಧೀಶ್ವರ ಸರ್ವೇಶ್ವರಾ, ಕೆರೂಬಿಗಳ ಮೇಲೆ ಆಸೀನಾರೂಢರಾಗಿರುವವರೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀವೊಬ್ಬರೇ; ಪರಲೋಕ ಭೂಲೋಕಗಳನ್ನುಂಟುಮಾಡಿದವರು ನೀವೇ.</verse>
				<verse number="17">ಸರ್ವೇಶ್ವರಾ, ಕಿವಿಗೊಟ್ಟು ಕೇಳಿ; ಸರ್ವೇಶ್ವರಾ, ಕಣ್ಣಿಟ್ಟು ನೋಡಿ. ಸನ್ಹೇರೀಬನು ಜೀವಸ್ವರೂಪ ದೇವರಾದ ನಿಮ್ಮನ್ನು ನಿಂದಿಸುವುದಕ್ಕೋಸ್ಕರ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೊಳ್ಳಿ.</verse>
				<verse number="18">ಸರ್ವೇಶ್ವರಾ, ಅಸ್ಸೀರಿಯರ ರಾಜರು ಸಕಲ ರಾಷ್ಟ್ರಗಳನ್ನೂ ಹಾಗೂ ಅವರ ನಾಡುಗಳನ್ನೂ ಹಾಳುಮಾಡಿದ್ದಾರೆ.</verse>
				<verse number="19">ಅವರ ದೇವರುಗಳನ್ನೂ ಬೆಂಕಿಗೆ ಹಾಕಿದ್ದು ನಿಜ. ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳ ಬೊಂಬೆಗಳಷ್ಟೆ, ಆದುದರಿಂದಲೇ ಅವು ಅವರಿಂದ ಹಾಳಾದವು.</verse>
				<verse number="20">ನಮ್ಮ ದೇವರಾದ ಸರ್ವೇಶ್ವರಾ, ನೀವೇ ಏಕೈಕ ಸರ್ವೇಶ್ವರ ಎಂಬುದನ್ನು ಭೂಮಿಯ ರಾಷ್ಟ್ರಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಅಸ್ಸೀರಿಯರ ಕೈಯಿಂದ ಬಿಡಿಸಿರಿ.”</verse>
				<verse number="21">ಆಗ ಆಮೋಚನ ಮಗ ಯೆಶಾಯನು ಹಿಜ್ಕೀಯನಿಗೆ ಹೇಳಿಕಳುಹಿಸಿದ್ದೇನೆಂದರೆ: “ಇಸ್ರಯೇಲಿನ ದೇವರಾದ ಸರ್ವೇಶ್ವರ ಸ್ವಾಮಿಯ ಈ ಮಾತುಗಳನ್ನು ಕೇಳು: ನೀನು ಅಸ್ಸೀರಿಯದ ಅರಸ ಸನ್ಹೇರೀಬನ ವಿಷಯವಾಗಿ ಮಾಡಿದ ಬಿನ್ನಹಗಳು ಸರ್ವೇಶ್ವರ ಸ್ವಾಮಿಗೆ ಮುಟ್ಟಿವೆ. ಅವರು ಅವನಿಗೆ ವಿರುದ್ಧ ಹೀಗೆಂದಿದ್ದಾರೆ -</verse>
				<verse number="22">“ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು, ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು.</verse>
				<verse number="23">ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಪರಮಪಾವನ ಸ್ವಾಮಿಯನ್ನಲ್ಲವೇನು?</verse>
				<verse number="24">ನೀನು ನಿನ್ನ ಸೇವಕರ ಮೂಲಕ ಸರ್ವೇಶ್ವರನನ್ನು ನಿಂದಿಸಿರುವೆ. ಅಲ್ಲದೆ, ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿರುವೆ: ‘ಹತ್ತಿದ್ದೇನೆ ಗಿರಿಶಿಖರಗಳನ್ನು ರಥಸಮೂಹದೊಡನೆ ಸೇರಿದ್ದೇನೆ ಲೆಬನೋನಿನ ದುರ್ಗಮ ಸ್ಥಳಗಳನ್ನೇ. ಕಡಿದಿದ್ದೇನೆ ಅದರ ಎತ್ತರವಾದ ದೇವದಾರು ವೃಕ್ಷಗಳನ್ನೇ, ಕತ್ತರಿಸಿದ್ದೇನೆ ಅದರ ಶ್ರೇಷ್ಠವಾದ ತುರಾಯಿ ಮರಗಳನ್ನೇ. ಒಳಹೊಕ್ಕಿದ್ದೇನೆ ಅಲ್ಲಿನ ದೂರದ ಶಿಖರವನ್ನೇ, ಪ್ರವೇಶಿಸಿದ್ದೇನೆ ದಟ್ಟವಾದ ಆ ಕಾಡುಮೇಡುಗಳನ್ನೇ</verse>
				<verse number="25">ಪರನಾಡುಗಳಲ್ಲಿ ಬಾವಿತೋಡಿ ನೀರು ಕುಡಿದಿದ್ದೇನೆ, ನನ್ನ ಅಂಗಾಲಿನಿಂದಲೇ ಈಜಿಪ್ಟಿನ ನದಿಗಳನ್ನೆಲ್ಲಾ ಬತ್ತಿಸಿದ್ದೇನೆ.</verse>
				<verse number="26">ಇದನ್ನೆಲ್ಲಾ ಬಹುಕಾಲದ ಹಿಂದೆ ಗೊತ್ತು ಮಾಡಿದವನು ನಾನೇ, ಪೂರ್ವಕಾಲದಲ್ಲಿ ನಿರ್ಣಯಿಸಿದುದನ್ನು ಈಗ ನೆರವೇರಿಸಿದ್ದೇನೆ. ಕೋಟೆ ನಗರಗಳನ್ನು ನೀನು ಹಾಳು ದಿಬ್ಬಗಳನ್ನಾಗಿಸಿದೆ, ಆದರೆ ಸಾಧ್ಯವಾಯಿತಿದು ನನ್ನಿಂದಲೇ, ನಿನಗಿದು ತಿಳಿಯದೆಹೋಯಿತೆ?</verse>
				<verse number="27">ಬಲವಿಲ್ಲದವರಾದರು ಆ ನಗರವಾಸಿಗಳು ನನ್ನ ನಿಮಿತ್ತವೆ, ಸಮಾನರಾದರು ಹೊಲದ ಸಸಿಗೆ, ಎಳೆಗರಿಕೆಗೆ, ಮಾಳಿಗೆ ಮೇಲಿನ ಹುಲ್ಲಿಗೆ. ಬೆಳೆಯುವುದಕ್ಕೆ ಮೊದಲೆ ತುತ್ತಾದರು ಬಿರುಗಾಳಿಯ ಹೊಡೆತಕ್ಕೆ.</verse>
				<verse number="28">ನನಗೆ ಗೊತ್ತಿದೆ ನೀ ಕೂರುವುದು ಹೋಗಿಬರುವುದು, ನನಗೆ ತಿಳಿದಿದೆ ನೀ ನನ್ನ ಮೇಲೆ ರೌದ್ರಾವೇಶಗೊಂಡಿರುವುದು.</verse>
				<verse number="29">ನನ್ನ ವಿರುದ್ಧ, ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ, ಎಂದೇ ಹಾಕುವೆ ಮೂಗಿಗೆ ದಾರ, ಬಾಯಿಗೆ ಕಡಿವಾಣ. ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ’.”</verse>
				<verse number="30">ಬಳಿಕ ಯೆಶಾಯನು ರಾಜ ಹಿಜ್ಕೀಯನಿಗೆ, “ಈ ಮಾತುಗಳು ನೆರವೇರುತ್ತವೆಂಬುದಕ್ಕೆ ಸೂಚನೆ ಇದು: ಈ ವರ್ಷದಲ್ಲಿ ನೀವು ಕೂಳೆಬೆಳೆಯನ್ನು, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಅದು ಬೆಳೆದುದನ್ನು, ಆದರೆ ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದುದನ್ನು, ದ್ರಾಕ್ಷಿತೋಟದಲ್ಲಿ ವ್ಯವಸಾಯಮಾಡಿ ಶೇಖರಿಸಿದ್ದನ್ನು ಅನುಭವಿಸುವಿರಿ.</verse>
				<verse number="31">ಅಳಿದುಳಿದ ಯೆಹೂದ್ಯರು ನಾಡಿನಲ್ಲಿ ಬೇರೂರಿ ನೆಲೆಗೊಳ್ಳುವರು; ಬೆಳೆದು ಅಭಿವೃದ್ಧಿಯಾಗುವರು.</verse>
				<verse number="32">ಆ ಅಳಿದುಳಿದವರು ಜೆರುಸಲೇಮಿನಲ್ಲೇ ಹರಡಿಕೊಳ್ಳುವರು, ಸಿಯೋನ್ ಪರ್ವತದಲ್ಲಿ ಅಭಿವೃದ್ಧಿಯಾಗುವರು, ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಆಗ್ರಹವೇ ಇದನ್ನು ಸಾಧಿಸುವುದು.</verse>
				<verse number="33">“ಅಸ್ಸೀರಿಯದ ಅರಸನನ್ನು ಕುರಿತು ಸರ್ವೇಶ್ವರ ಹೇಳಿರುವ ಮಾತಿದು - ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದರತ್ತ ಬಾಣವನ್ನೆಸೆಯುವುದಿಲ್ಲ, ಕವಚಧಾರಿಗಳನ್ನು ಕಳುಹಿಸುವುದಿಲ್ಲ. ಅದರ ಆಕ್ರಮಣಕ್ಕಾಗಿ ಮಣ್ಣುದಿಬ್ಬಗಳನ್ನು ಎಬ್ಬಿಸುವುದಿಲ್ಲ.</verse>
				<verse number="34">ಅವನು ಬಂದ ದಾರಿಯಿಂದಲೇ ಹಿಂದಿರುಗಿಹೋಗುವನು; ಈ ಪಟ್ಟಣಕ್ಕೆ ಕಾಲಿಡನು.</verse>
				<verse number="35">ನನಗಾಗಿಯೂ ನನ್ನ ದಾಸ ದಾವೀದನಿಗಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು - ಎಂದಿದ್ದಾರೆ,” ಎಂದು ಹೇಳಿದನು.</verse>
				<verse number="36">ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.</verse>
				<verse number="37">ಆದ್ದರಿಂದ ಅಸ್ಸೀರಿಯರ ಅರಸನಾದ ಸನ್ಹೇರೀಬನು ಹಿಂದಿರುಗಿದನು.</verse>
				<verse number="38">ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿನ ದೇವರಾದ ನಿಸ್ರೋಕನನ್ನು ಆರಾಧನೆ ಮಾಡುತ್ತಿರುವಾಗ, ಅದ್ರಮ್ಮೆಲೆಕ್ ಮತ್ತು ಸರೆಚೆರ್ ಎಂಬ ಅವನ ಇಬ್ಬರು ಮಕ್ಕಳು ಅವನನ್ನು ಕತ್ತಿಯಿಂದ ಕೊಂದು ಅರರಾಟ್ ನಾಡಿಗೆ ಪಲಾಯನಗೈದರು. ಬಳಿಕ ಅವನ ಇನ್ನೊಬ್ಬ ಮಗ ಏಸರ್ ಹದ್ದೋನನು ಅರಸನಾದನು.</verse>
			</chapter>
			<chapter number="38">
				<verse number="1">ಆ ದಿನಗಳಲ್ಲಿ ಹಿಜ್ಕೀಯನು ರೋಗದಿಂದ ಮರಣಾವಸ್ಥೆಯಲ್ಲಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು, “ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ. ಆದುದರಿಂದ ನಿನ್ನ ಸಂಸಾರವನ್ನು ವ್ಯವಸ್ಥೆಮಾಡಬೇಕು ಎಂದು ಸರ್ವೇಶ್ವರ ಹೇಳಿದ್ದಾರೆ,” ಎಂದು ತಿಳಿಸಿದನು.</verse>
				<verse number="2">ಇದನ್ನು ಕೇಳಿದೊಡನೆ ಹಿಜ್ಕೀಯನು ಗೋಡೆಯ ಕಡೆಗೆ ತಿರುಗಿಕೊಂಡು,</verse>
				<verse number="3">“ಸರ್ವೇಶ್ವರಾ, ನಿಮಗೆ ಶ್ರದ್ಧೆಯಿಂದಲೂ, ಪ್ರಾಮಾಣಿಕತೆಯಿಂದಲೂ ಸೇವೆಮಾಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿಯೇ ನಡೆದುಕೊಂಡಿದ್ದೇನೆ. ಇದನ್ನು ದಯೆಯಿಂದ ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥನೆ ಮಾಡಿದನು.</verse>
				<verse number="4">ಆಗ ಸರ್ವೇಶ್ವರ ಯೆಶಾಯನಿಗೆ,</verse>
				<verse number="5">“ನೀನು ಹೋಗಿ ಹಿಜ್ಕೀಯನಿಗೆ ಹೀಗೆಂದು ತಿಳಿಸು: ‘ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಇನ್ನೂ ಹದಿನೈದು ವರ್ಷಗಳನ್ನು ಸೇರಿಸುತ್ತೇನೆ.</verse>
				<verse number="6">ನಿನ್ನನ್ನು ಮತ್ತು ಈ ಪಟ್ಟಣವನ್ನು ಅಸ್ಸೀರಿಯದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸುತ್ತೇನೆ. ಈ ಪಟ್ಟಣವನ್ನು ಉಳಿಸಿ ಕಾಪಾಡುತ್ತೇನೆ’.”</verse>
				<verse number="7"></verse>
				<verse number="8"></verse>
				<verse number="9"></verse>
				<verse number="10"></verse>
				<verse number="11"></verse>
				<verse number="12"></verse>
				<verse number="13"></verse>
				<verse number="14"></verse>
				<verse number="15"></verse>
				<verse number="16"></verse>
				<verse number="17"></verse>
				<verse number="18"></verse>
				<verse number="19"></verse>
				<verse number="20"></verse>
				<verse number="21">ಯೆಶಾಯನು ಹಿಜ್ಕೀಯನಿಗೆ ಅಂಜೂರದ ಹಣ್ಣುಗಳ ಅಡೆಯನ್ನು ತರಿಸಿ, ‘ನಿನ್ನ ಕುರುವಿನ ಮೇಲೆ ಕಟ್ಟು, ಆಗ ನೀನು ಗುಣಹೊಂದುವೆ,” ಎಂದು ಹೇಳಲು</verse>
				<verse number="22">ಹಿಜ್ಕೀಯನು, “ನಾನು ಗುಣಹೊಂದಿ ಸರ್ವೇಶ್ವರ ಸ್ವಾಮಿಯ ಆಲಯವನ್ನು ಸೇರುವೆನು ಎಂಬುದಕ್ಕೆ ಗುರುತೇನು?” ಎಂದು ಕೇಳಿದನು. ಅದಕ್ಕೆ ಯೆಶಾಯನು, “ಸರ್ವೇಶ್ವರ ನುಡಿದದ್ದನ್ನು ನೆರವೇರಿಸುವರು ಎಂಬುದಕ್ಕೆ ಈ ಗುರುತನ್ನು ಕಾಣುವೆ: ಇಗೋ, ಅಹಾಜನು ಕಟ್ಟಿಸಿದ ನೆರಳು ಗಡಿಯಾರದಲ್ಲಿ ಸೂರ್ಯನ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬರುವಂತೆ ಮಾಡುವರು,” ಎಂದು ತಿಳಿಸಿದನು. ಅಂತೆಯೇ ಮುಂದೆ ಹೋಗಿದ್ದ ನೆರಳು ಹತ್ತು ಮೆಟ್ಟಲು ಹಿಂದಕ್ಕೆ ಬಂದಿತು. ಜುದೇಯದ ಅರಸ ಹಿಜ್ಕೀಯನು ರೋಗದಿಂದ ಗುಣಹೊಂದಿದಾಗ ಬರೆದ ಸ್ತುತಿಗೀತೆ: ನನ್ನ ರೋಗದಲ್ಲಿ ನಾನು ಇಂತೆಂದುಕೊಂಡೆ: ಮಧ್ಯಪ್ರಾಯದಲ್ಲೇ ಮೃತ್ಯುಲೋಕವನ್ನು ಸಮೀಪಿಸಿರುವೆ ನನ್ನ ಆಯುಷ್ಯವನ್ನು ನಾ ಕಳೆದುಕೊಂಡಿರುವೆ. ಜೀವಲೋಕದಲ್ಲಿ ಇನ್ನು ದೇವನನ್ನು ಕಾಣೆನೆಂದುಕೊಂಡೆ ಭೂಲೋಕನಿವಾಸಿಗಳಲ್ಲಿ ಒಬ್ಬನನ್ನೂ ನೋಡಲಾರೆನೆಂದುಕೊಂಡೆ. ಕುರುಬನು ತನ್ನ ಗುಡಿಸಲನ್ನು ಕಿತ್ತುಹಾಕುವಂತೆ ನೇಯಿಗೆಯವನು ತನ್ನ ಹಾಸನ್ನು ಸುತ್ತುವಂತೆ ಮಗ್ಗದಿಂದ ಅವನು ದಾರವನ್ನು ಕತ್ತರಿಸುವಂತೆ ಬೆಳಗುಬೈಗಿನೊಳಗೆ ನನ್ನ ಆಯುಷ್ಯವನ್ನು ನೀ ಮುಗಿಸುತ್ತಿರುವೆನೆಂದೆ. ಸಿಂಹವು ಮೇಲೆಬಿದ್ದು ಮೂಳೆ ಮುರಿದಂತೆ ನನಗಾಗುತ್ತಿತ್ತು ಅತೀವ ಬಾಧೆ, ಆದರೂ ಇರುಳೆಲ್ಲ ಮೊರೆಯಿಡುತ್ತಿದ್ದೆ ಬೆಳಗು ಬೈಗಿನೊಳಗೆ ನೀ ನನ್ನ ಮುಗಿಸುತ್ತಿರುವೆನೆಂದೆ. ಕಿಚುಗುಟ್ಟಿದೆ ನಾ ಬಾನಕ್ಕಿ-ಬಕಗಳಂತೆ ಗುಬ್ಬಳಿಸಿದೆ ನಾ ಪಾರಿವಾಳದಂತೆ ಕಂಗೆಟ್ಟೆ, ನಾ ಮೇಲೆ ಮೇಲಕ್ಕೆ ನೋಡುತಾ ಸರ್ವೇಶ್ವರಾ, ನಾನಿರುವೆ ಬಾಧೆಪಡುತಾ ನೀ ಎನಗೆ ನೆರವಾಗಲು ಬಾ ಎನ್ನುತಾ. ನುಡಿದಂತೆ ಪ್ರಭೂ ನೆರವೇರಿಸಿಹನು; ನಾನೇನು ಹೇಳಲಿ; ಮುಳುಗಿದೆ ನನ್ನಾತ್ಮ ದುಃಖಸಾಗರದಲಿ ನಿದ್ರೆಯಿಲ್ಲದೆ ಸೊರಗುತಿದೆ ನನ್ನ ಜೀವಮಾನವಿಡೀ. ಸರ್ವೇಶ್ವರಾ, ಮಾನವನ ಜೀವನ ಇಂತಿದೆ, ಇವುಗಳಿಂದಲೇ ನನ್ನ ಆತ್ಮ ಚೇತನಗೊಳ್ಳುತಿದೆ, ನೀನೀಗ ಗುಣಪಡಿಸು, ನಾ ಬಾಳುವೆ. ನಾ ಪಟ್ಟ ದುಃಖವು ನನ್ನ ಸುಖಕ್ಕಾಗಿಯೇ ನನ್ನಾತ್ಮವನ್ನು ನಾಶಕೂಪದಿಂದ ರಕ್ಷಿಸಿದ್ದು ನಿನ್ನ ಪ್ರೀತಿಯೇ; ನನ್ನ ಪಾಪಗಳನ್ನೆಲ್ಲಾ ನೀ ಹಾಕಿರುವೆ ನಿನ್ನ ಬೆನ್ನ ಹಿಂದೆ. ಸತ್ತವರು ನಿನ್ನನ್ನು ಕೀರ್ತಿಸರು ಪಾತಾಳದವರು ನಿನ್ನನ್ನು ಸ್ತುತಿಸರು ಅಧೋಲೋಕಕ್ಕೆ ಇಳಿದುಹೋದವರು ನಿನ್ನ ಸತ್ಯಸಂಧತೆಯನ್ನು ಆಶ್ರಯಿಸರು. ಜೀವಂತನು, ಜೀವಂತನು ಮಾತ್ರವೇ ನಿನ್ನ ಸ್ತುತಿಮಾಡುವಂತೆ ನಾನಿಂದು ನಿನ್ನನ್ನು ಜೀವಂತನಾಗಿ ಸ್ತುತಿಮಾಡುತ್ತಿರುವೆ ನಿನ್ನ ಸತ್ಯಸಂಧತೆಯನ್ನು ಮಕ್ಕಳಿಗೆ ಬೋಧಿಸುವನು ತಂದೆ. ಸರ್ವೇಶ್ವರಾ, ನೀ ನನ್ನ ಉದ್ಧಾರಕ ಹೊಗಳುವೆ ನಿನ್ನ ನಾ ತಂತಿವಾದ್ಯ ಸಮೇತ ದಿನನಿತ್ಯ, ನಿನ್ನಾಲಯದೊಳು, ಜೀವವಿರುವ ತನಕ.</verse>
			</chapter>
			<chapter number="39">
				<verse number="1">ಅದೇ ಕಾಲದಲ್ಲಿ ಬಲದಾನನ ಮಗನು ಹಾಗೂ ಬಾಬಿಲೋನಿಯದ ಅರಸನು ಆದ ಮೆರೋದಕಬಲದಾನ ಎಂಬವನು, ರಾಜ ಹಿಜ್ಕೀಯನು ರೋಗದಿಂದ ಗುಣಹೊಂದಿದನು ಎಂದು ಕೇಳಿ ಅವನಿಗೆ ಉಡುಗೊರೆಯೊಂದಿಗೆ ಒಂದು ಪತ್ರವನ್ನು ಕಳುಹಿಸಿದನು.</verse>
				<verse number="2">ಹಿಜ್ಕೀಯನು ಆ ದೂತರನ್ನು ಸಂತೋಷದಿಂದ ಬರಮಾಡಿಕೊಂಡು ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿಂದ ಕೂಡಿದ ಕರಂಡಗಳನ್ನು, ಆಯುಧ ಶಾಲೆಯನ್ನು ಮತ್ತು ತನ್ನ ಭಂಡಾರದಲ್ಲಿದ್ದ ಒಡವೆವಸ್ತುಗಳನ್ನು ತೋರಿಸಿದನು. ಅವನ ಅರಮನೆಯಲ್ಲೂ ರಾಜ್ಯದಲ್ಲೂ ಇದ್ದ ಸಮಸ್ತವನ್ನು ತೋರಿಸಿದನು.</verse>
				<verse number="3">ಆಗ ಪ್ರವಾದಿ ಯೆಶಾಯನು ಹಿಜ್ಕೀಯನ ಬಳಿಗೆ ಬಂದು, “ಆ ದೂತರು ಎಲ್ಲಿಯವರು? ಏನು ಕೇಳಿದರು?” ಎಂದನು. ಅದಕ್ಕೆ ಹಿಜ್ಕೀಯನು, “ಅವರು ಬಹುದೂರದ ನಾಡಾದ ಬಾಬಿಲೋನಿಯದಿಂದ ಬಂದವರು,” ಎಂದು ಉತ್ತರಕೊಟ್ಟನು.</verse>
				<verse number="4">ಯೆಶಾಯನು ಮತ್ತೆ ಅವನನ್ನು, “ಅವರು ನಿನ್ನ ಅರಮನೆಯಲ್ಲಿ ಏನೇನನ್ನು ನೋಡಿದರು?” ಎಂದು ಕೇಳಲು ಹಿಜ್ಕೀಯನು, “ಅರಮನೆಯಲ್ಲಿ ಇರುವುದೆಲ್ಲವನ್ನು ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದ ಒಡವೆ ವಸ್ತು ಒಂದೂ ಇಲ್ಲ,” ಎಂದನು.</verse>
				<verse number="5">ಆಗ ಯೆಶಾಯನು ಅವನಿಗೆ, “ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಈ ಮಾತನ್ನು ಕೇಳು:</verse>
				<verse number="6">ನಿನ್ನ ಪೂರ್ವಜರ ಕಾಲದಿಂದ ಇಂದಿನವರೆಗೆ ಅರಮನೆಯಲ್ಲಿ ಕೂಡಿಸಿಟ್ಟ ಎಲ್ಲವನ್ನು ಬಾಬಿಲೋನಿಯಾಗೆ ಕೊಂಡೊಯ್ಯುವ ದಿನ ಬರುವುದು; ಇಲ್ಲಿ ಏನೂ ಉಳಿಯುವುದಿಲ್ಲ.</verse>
				<verse number="7">ನೀನು ಪಡೆದ ಮಕ್ಕಳಲ್ಲಿ ಕೆಲವರನ್ನು, ನಿನ್ನ ಸ್ವಂತ ಪುತ್ರರನ್ನು ತೆಗೆದುಕೊಂಡು ಹೋಗಿ ಬಾಬಿಲೋನಿಯರ ಅರಸರ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು,” ಎಂದು ಹೇಳಿದನು.</verse>
				<verse number="8">ಆಗ ರಾಜ ಹಿಜ್ಕೀಯನು ಹೇಗೂ ತನ್ನ ಜೀವಮಾನದಲ್ಲಿ ಶಾಂತಿ ಸೌಭಾಗ್ಯ ಇರುವುದೆಂದು ತಿಳಿದುಕೊಂಡು ಯೆಶಾಯನಿಗೆ, “ನೀನು ತಿಳಿಸಿದ ಸರ್ವೇಶ್ವರ ಸ್ವಾಮಿಯ ಮಾತು ಹಿತಕರವಾದುದು,” ಎಂದು ಉತ್ತರಕೊಟ್ಟನು.</verse>
			</chapter>
			<chapter number="40">
				<verse number="1">ನಿಮ್ಮ ದೇವರು ಇಂತೆನ್ನುತ್ತಾರೆ: “ಸಂತೈಸಿ, ನನ್ನ ಜನರನ್ನು ಸಂತೈಸಿರಿ.</verse>
				<verse number="2">ಜೆರುಸಲೇಮಿನೊಡನೆ ಪ್ರೀತಿಯಿಂದ ಮಾತನಾಡಿ; ಅದರ ಊಳಿಗತನ ಮುಗಿಯಿತೆನ್ನಿ; ತಕ್ಕ ಪ್ರಾಯಶ್ಚಿತ್ತವಾಗಿದೆ ಅದು ಗೈದ ದೋಷಕೆ ಸರ್ವೇಶ್ವರ ಸ್ವಾಮಿಯಿಂದಲೇ ಅದರ ಎಲ್ಲಾ ಪಾಪಕೃತ್ಯಗಳಿಗೆ ಇಮ್ಮಡಿ ಶಿಕ್ಷೆಯಾಗಿದೆ ಎಂದು ಕೂಗಿ ಹೇಳಿ ಆ ನಗರಿಗೆ.”</verse>
				<verse number="3">ಇಗೋ, ಈ ವಾಣಿಯನ್ನು ಕೇಳಿ: “ಸರ್ವೇಶ್ವರ ಸ್ವಾಮಿಗೆ ಮಾರ್ಗವನ್ನು ಸಿದ್ಧಮಾಡಿ ಅರಣ್ಯದಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಾಗಮಾಡಿ ಅಡವಿಯಲಿ.</verse>
				<verse number="4">ತುಂಬಬೇಕು ಎಲ್ಲ ಹಳ್ಳಕೊಳ್ಳಗಳನು ಮಟ್ಟಮಾಡಬೇಕು ಎಲ್ಲ ಬೆಟ್ಟಗುಡ್ಡಗಳನು. ನೆಲಸಮಮಾಡಬೇಕು ದಿಬ್ಬದಿಣ್ಣೆಗಳನು ಸಮತಲಗೊಳಿಸಬೇಕು ತಗ್ಗುಮುಗ್ಗಾದ ಸ್ಥಳಗಳನು.</verse>
				<verse number="5">ಗೋಚರವಾಗುವುದಾಗ ಸರ್ವೇಶ್ವರ ಸ್ವಾಮಿಯ ಮಹಿಮೆಯು, ಮಾನವರೆಲ್ಲರೂ ಅದನ್ನು ಕಾಣುವರು ಒಟ್ಟಿಗೆ, ಸರ್ವೇಶ್ವರ ಸ್ವಾಮಿಯೇ ಇದನ್ನು ಬಾಯಾರೆ ನುಡಿದಿದ್ದಾರೆ.”</verse>
				<verse number="6">ಆ ವಾಣಿ ಮತ್ತೆ ಕೇಳಿಸಿತು: ‘ಗಟ್ಟಿಯಾಗಿ ಕೂಗು’ ಎಂದಿತು ನಾನೇನೆಂದು ಕೂಗಲಿ ಎನ್ನಲು ಈ ಪರಿಯಾಗಿ ಉತ್ತರಿಸಿತು: “ನರಮಾನವರೆಲ್ಲ ಬರೀ ಹುಲ್ಲಿನಂತೆ ಅವರ ಸೊಬಗೆಲ್ಲಾ ಬಯಲಿನ ಕುಸುಮದಂತೆ.</verse>
				<verse number="7">ಪ್ರಭುವಿನ ಶ್ವಾಸ ಬೀಸಲು ಒಣಗಿ ಹೋಗುವುದಾ ಹುಲ್ಲು ಬಾಡಿ ಹೋಗುವುದಾ ಹೂವು ಮಾನವರೆಲ್ಲ ಹುಲ್ಲೇ ಹುಲ್ಲು.</verse>
				<verse number="8">ಒಣಗಿ ಹೋಗುವುದಾ ಹುಲ್ಲು, ಬಾಡಿಹೋಗುವುದಾ ಹೂವು, ನಮ್ಮ ದೇವರ ನುಡಿಯಾದರೋ ಇರುವುದು ಚಿರಕಾಲವು.”</verse>
				<verse number="9">ಪರ್ವತವನ್ನೇರು ಶುಭಸಂದೇಶಕಳಾದ ಸಿಯೋನೇ, ಧ್ವನಿಯೇರಿಸು, ಶುಭವಾರ್ತೆ ಸಾರಬಲ್ಲ ಜೆರುಸಲೇಮೇ, ಧ್ವನಿಯೇರಿಸು, ನಿರ್ಭಯದಿಂದ ಏರಿಸು ‘ಇಗೋ, ನಿಮ್ಮ ದೇವರು’ ಎಂದು ಜೂದ ನಗರಗಳಿಗೆ ಸಾರು.</verse>
				<verse number="10">ಇಗೋ, ಬರುತಿಹನು ಸ್ವಾಮಿ ಸರ್ವೇಶ್ವರ ಶೂರನಂತೆ ರಾಜ್ಯವಾಳುವನು ತನ್ನ ಭುಜಬಲದಿಂದಲೇ ಇಗೋ, ಶ್ರಮಕ್ಕೆ ತಕ್ಕ ಪ್ರತಿಫಲ ಆತನ ಕೈಯಲ್ಲಿದೆ ಆತ ಜಯಿಸಿದ ಪರಿವಾರ ಆತನ ಮುಂದಿದೆ.</verse>
				<verse number="11">ಆತ ಮೇಯಿಸುವನು ತನ್ನ ಮಂದೆಯನ್ನು ಕುರುಬನ ಹಾಗೆ ಮರಿಗಳನ್ನು ಕೈಗೆ ಎತ್ತಿಕೊಳ್ಳುವನು, ಅಪ್ಪಿಕೊಳ್ಳುವನು ಎದೆಗೆ ನಡೆಸುವನು ಹಾಲೂಡಿಸುವ ಕುರಿಗಳನ್ನು ಮೆಲ್ಲಗೆ.</verse>
				<verse number="12">ಅಳೆವನಾರು ಸಮುದ್ರಸಾಗರಗಳನ್ನು ಬೊಗಸೆಗೈಯಿಂದ? ಮೊಳ ಹಾಕುವವನಾರು ಆಕಾಶಮಂಡಲವನ್ನು ಕೈಗೇಣಿನಿಂದ? ತುಂಬುವವನಾರು ಧರೆಯ ಮರಳನ್ನೆಲ್ಲಾ ಕೊಳಗದೊಳಗೆ? ತೂಗಿದವನಾರು ಬೆಟ್ಟಗುಡ್ಡಗಳನ್ನು ತ್ರಾಸುತಕ್ಕಡಿಯೊಳಗೆ?</verse>
				<verse number="13">ಆದೇಶವಿತ್ತವನಾರು ಸರ್ವೇಶ್ವರನ ಆತ್ಮಕೆ? ಉಪದೇಶವಿತ್ತ ಸಲಹೆಗಾರನಾರು ಆತನಿಗೆ?</verse>
				<verse number="14">ಜ್ಞಾನೋದಯ ನೀಡಿದವನಾರು ಆತನಿಗೆ? ನ್ಯಾಯಮಾರ್ಗ ತೋರಿಸಿದವನಾರು ಆತನಿಗೆ? ಬುದ್ಧಿ ಕಲಿಸಿದವನಾರು ಆತನಿಗೆ? ಏನೇ ಮಾರ್ಗವನ್ನು ಸೂಚಿಸಿದವನಾರು ಆತನಿಗೆ?</verse>
				<verse number="15">ಆತನ ಗಣನೆಗೆ ರಾಷ್ಟ್ರಗಳು ಕಪಿಲೆಯಿಂದ ಉದುರುವ ತುಂತುರುಗಳು ತ್ರಾಸಿನ ತಟ್ಟೆಯ ಮೇಲಿರುವ ಧೂಳಿನ ಕಣಗಳು ದ್ವೀಪಗಳೋ ಆತನ ತೂಕಕ್ಕೆ ಅಣುರೇಣುಗಳು.</verse>
				<verse number="16">ಲೆಬನೋನಿನ ಪಶುಗಳು ಸಾಲವು ದಹನಬಲಿಗೆ ಅಲ್ಲಿನ ಮರಗಳು ಸಾಲವು ಅದರ ಸೌದೆಗೆ.</verse>
				<verse number="17">ಸಕಲ ರಾಷ್ಟ್ರಗಳು ಆತನ ದೃಷ್ಟಿಗೆ ಏನೂ ಇಲ್ಲದಂತೆ ಅವುಗಳು ಆತನ ಎಣಿಕೆಗೆ ಶುದ್ಧ ಸೊನ್ನೆಯಂತೆ.</verse>
				<verse number="18">ಇಂತಿರಲು ಯಾರಿಗೆ ಹೋಲಿಸಬಲ್ಲಿರಿ ದೇವರನು? ಕೊಡಬಲ್ಲಿರಾ ಆತನಿಗೆ ಯಾವುದಾದರೊಂದು ಉಪಮಾನವನು?</verse>
				<verse number="19">ವಿಗ್ರಹವಾದರೋ ಎರಕ ಹೊಯ್ಯಲ್ಪಟ್ಟಿತು ಶಿಲ್ಪಿಯಿಂದ ಅದಕ್ಕೆ ಬಡಿದಿರುವ ಚಿನ್ನದ ಕವಚ ಅಕ್ಕಸಾಲಿಗನಿಂದ ಅದಕ್ಕೆ ತೊಡಿಸಿರುವ ಬೆಳ್ಳಿಸರಪಣಿ ಆ ವಾಜನಿಂದ.</verse>
				<verse number="20">ಇಷ್ಟು ಹಣವನ್ನು ವೆಚ್ಚ ಮಾಡಲಾಗದ ಬಡವನು ಹುಡುಕುವನು ಹುಳಿತುಹೋಗದ ಮರವನು ಬಾಗಿ ಬೀಳದ ವಿಗ್ರಹವನ್ನು ಮಾಡಬಲ್ಲಾ ಕುಶಲನನು.</verse>
				<verse number="21">ನಿಮಗೆ ತಿಳಿದಿಲ್ಲವೋ, ನೀವು ಕೇಳಿಲ್ಲವೋ ಆದಿಯಿಂದ ನಿಮಗೆ ಉಪದೇಶವಾಗಿ ಬಂದಿಲ್ಲವೋ? ಪೃಥ್ವಿಸ್ಥಾಪನೆ ಹೇಗಾಯಿತೆಂದು ನೀವು ಗ್ರಹಿಸಿಲ್ಲವೋ?</verse>
				<verse number="22">ಆಸೀನನಾಗಿಹನು ಆತ ಭೂಮಂಡಲಕ್ಕಿಂತ ಮೇಲೆ ಭೂನಿವಾಸಿಗಳು ಕಾಣುತಿಹರು ಆತನಿಗೆ ಮಿಡತೆಗಳಂತೆ ಹರಡಿಹನು ಆಕಾಶಮಂಡಲವನು ನವಿರು ಬಟ್ಟೆಯಂತೆ ಮೇಲೆತ್ತಿಕಟ್ಟಿಹನು ಅದನ್ನು ನಿವಾಸದ ಗುಡಾರದಂತೆ.</verse>
				<verse number="23">ನಾಶಗೊಳಿಸುವನಾತ ದೇಶಾಧಿಪತಿಗಳನು ನಿರ್ನಾಮಗೊಳಿಸುವನು ರಾಜಾಧಿರಾಜರನು.</verse>
				<verse number="24">ನೆಟ್ಟಕೂಡಲೇ, ಬಿತ್ತಿದಾಕ್ಷಣವೇ, ಭೂಮಿಯಲ್ಲಿ ಬೇರೂರುವಾಗಲೆ ಬಾಡುವುದು ಇವರ ಸಂತಾನ ಆತನ ಶ್ವಾಸದಿಂದಲೆ; ಬಡಿದು ಹೊಯ್ಯಲ್ಪಡುವುದು ಒಣಹುಲ್ಲಿನಂತೆ ಬಿರುಗಾಳಿಯಿಂದಲೆ.</verse>
				<verse number="25">“ಇಂತಿರಲು ನನ್ನನ್ನು ಯಾರಿಗೆ ಹೋಲಿಸಬಲ್ಲಿರಿ?” ಯಾರಿಗೆ ನನ್ನನ್ನು ಸರಿಸಮಾನ ಮಾಡಬಲ್ಲಿರಿ?” ಎಂದು ಕೇಳುತ್ತಿಹರು ಪರಮಪಾವನ ಸ್ವಾಮಿ.</verse>
				<verse number="26">ಕಣ್ಣೆತ್ತಿ, ದಿಟ್ಟಿಸಿನೋಡಿ ಆಕಾಶದತ್ತ ಯಾರು ಆ ತಾರೆಗಳನ್ನು ರಚಿಸಿದಾತ? ಆ ತಾರಾ ಸಮೂಹವನ್ನು ಕ್ರಮಾನುಸಾರ ನಡೆಸುವಾತ, ಒಂದೊಂದನ್ನೂ ಹೆಸರಿಟ್ಟು ಕರೆಯುವಾತ, ಅವುಗಳಲ್ಲಿ ಒಂದನ್ನೂ ಕಾಣೆಯಾಗಲು ಬಿಡದಾತ, ಅಷ್ಟು ಬಲಾಢ್ಯನು, ಶಕ್ತಿವಂತನು ಆತ</verse>
				<verse number="27">ಹೀಗಿರಲು ಎಲೈ ಯಕೋಬ್ಯರೇ, ಇಸ್ರಯೇಲರೇ, ‘ಮರೆಯಾಗಿದೆ ಪ್ರಭುವಿಗೆ ನನ್ನ ಕುಂದುಕೊರತೆ, ನ್ಯಾಯನೀತಿ ದೊರಕದಿದೆ ನನಗೆ ಇದರತ್ತ ದೇವರ ಲಕ್ಷ್ಯಬೀಳದಿದೆ’ ಎನ್ನುತ್ತಿರುವಿರಿ ಏಕೆ?</verse>
				<verse number="28">ನೀವು ಕೇಳಿಲ್ಲವೇ? ನಿಮಗೆ ತಿಳಿದಿಲ್ಲವೇ? ಸರ್ವೇಶ್ವರ ಅನಂತ ದೇವರಲ್ಲವೇ? ಭೂದಿಗಂತಗಳನ್ನು ಆತ ಸೃಜಿಸಿದನಲ್ಲವೇ? ದಣಿವೆಂಬುದು ಇಲ್ಲ, ಬಳಲಿಕೆ ಎಂಬುದು ಇಲ್ಲ ಆತನಿಗೆ. ಆತನ ದಕ್ಷಸಾಮರ್ಥ್ಯ ಅಗಮ್ಯ ಪರಿಶೋಧನೆಗೆ.</verse>
				<verse number="29">ದಯಪಾಲಿಸುವನಾತ ಬಲಾಭಿವೃದ್ಧಿಯನ್ನು ಬಳಲಿದವನಿಗೆ ಅನುಗ್ರಹಿಸುವನಾತ ಚೈತನ್ಯವನು ನಿತ್ರಾಣನಿಗೆ.</verse>
				<verse number="30">ಯುವಕರೂ ದಣಿದು ಬಳಲುವರು ತರುಣರೂ ಸೊರಗಿ ಮುಗ್ಗರಿಸುವರು.</verse>
				<verse number="31">ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.</verse>
			</chapter>
			<chapter number="41">
				<verse number="1">	ದೂರದೇಶದವರೇ, ಮೌನದಿಂದ ನನಗೆ ಕಿವಿಗೊಡಿ; ರಾಷ್ಟ್ರಗಳು ಎಷ್ಟೇ ಬಲಿಷ್ಠರಾಗಿರಲಿ ಬಂದು ಮಾತಾಡಲಿ ಸಮೀಪದಲಿ. ಒಟ್ಟಿಗೆ ಸೇರೋಣ ನ್ಯಾಯಸ್ಥಾನದಲಿ.</verse>
				<verse number="2">ಕರೆತಂದವರಾರು ಆ ಪರಾಕ್ರಮಿಯನ್ನು ಪೂರ್ವದಿಂದ? ಅವನು ಗೆದ್ದುಬರುವಂತೆ ಮಾಡಿದವರಾರು ದಿಗ್ವಿಜಯದಿಂದ? ರಾಷ್ಟ್ರಗಳನ್ನು, ರಾಜರುಗಳನ್ನು ಸೋಲಿಸಿದವರಾರು ಅವನ ಕೈಯಿಂದ? ಧೂಳು ಧೂಳಾಗಿಸುತ್ತಾನೆ ಅವರನ್ನು ಅವನ ಖಡ್ಗದಿಂದ ಗಾಳಿಗೆ ತೂರಿಹೋಗುವ ಹುಲ್ಲನ್ನಾಗಿಸುತ್ತಾನೆ ಅವನ ಬಿಲ್ಲಿನಿಂದ.</verse>
				<verse number="3">ಹಿಂದಟ್ಟುತ್ತಾನೆ ಅವರನ್ನು ನಿರ್ಭೀತಿಯಿಂದ ಮುನ್ನುಗ್ಗುತ್ತಾನೆ ಕಾಲು ನೆಲ ಊರದಷ್ಟು ವೇಗದಿಂದ.</verse>
				<verse number="4">ಇದನ್ನೆಲ್ಲಾ ನಡೆಯಿಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವರು ಯಾರು? ಸರ್ವೇಶ್ವರನಾದ ನಾನೇ. ಹೌದು, ಆದಿಯಲ್ಲಿದ್ದವನು. ಅಂತ್ಯದಲ್ಲಿ ಇರುವವನು ಆದ ನಾನೇ.</verse>
				<verse number="5">ದೂರದೇಶದವರು ಕಂಡು ಬೆರಗಾದರು ಭೂಮಿಯ ಕಟ್ಟಕಡೆಯವರು ನಡುಗಿದರು ಎಲ್ಲರೂ ಇಲ್ಲಿಗೆ ನೆರೆದುಬಂದಿಹರು.</verse>
				<verse number="6">ಸಹಾಯಮಾಡಿದರು ಒಬ್ಬರಿಗೊಬ್ಬರು ಧೈರ್ಯ ಹೇಳಿಕೊಂಡರು ಒಬ್ಬರಿಗೊಬ್ಬರು.</verse>
				<verse number="7">ಚೆನ್ನಾಗಿದೆ ಎನ್ನುತ್ತಾನೆ ಬಡಗಿ ಅಕ್ಕಸಾಲಿಗನಿಗೆ; ಪ್ರೋತ್ಸಾಹ ನೀಡುತ್ತಾನೆ ನುಣುಪು ಮಾಡುವವನು ಅಡಿಗಲ್ಲನ್ನು ತಟ್ಟುವವನಿಗೆ. ಬೆಸುಗೆ ಚೆನ್ನಾಗಿದೆ ಎಂದವರು ಮೊಳೆಗಳನ್ನು ಬಡಿಯುತ್ತಾರೆ ವಿಗ್ರಹ ಅಲುಗದಂತೆ.</verse>
				<verse number="8">ಇಂತಿರಲು ನನ್ನ ದಾಸನಾದ ಇಸ್ರಯೇಲೇ, ನಾನು ಆಯ್ದುಕೊಂಡ ಯಕೋಬೇ, ನನ್ನ ಗೆಳೆಯ ಅಬ್ರಹಾಮನ ಸಂತತಿಯೇ,</verse>
				<verse number="9">ಬರಮಾಡಿದೆ ನಾನು ನಿನ್ನನ್ನು ಭೂಮಿಯ ಕಟ್ಟಕಡೆಯಿಂದ ಕರೆದುತಂದೆ ನಿನ್ನನ್ನು ದಿಗಂತದಿಂದ. ನಿನಗೆ ನಾನು ಇಂತೆಂದೆ: ನೀನೆನ್ನ ದಾಸ, ನಿನ್ನ ನಾ ತಿರಸ್ಕರಿಸದೆ ಆರಿಸಿಕೊಂಡೆ!</verse>
				<verse number="10">ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.</verse>
				<verse number="11">ಆಶಾಭಂಗಪಟ್ಟು ಅವಮಾನ ಹೊಂದುವರು ನಿನ್ನ ಮೇಲೆ ಕೋಪಗೊಂಡವರು ನಾಶವಾಗಿ ನಿರ್ಮೂಲವಾಗುವರು ನಿನ್ನ ಸಂಗಡ ವ್ಯಾಜ್ಯವಾಡಿದವರು.</verse>
				<verse number="12">ಹುಡುಕಿದರೂ ಸಿಗರು ನಿನ್ನೊಡನೆ ಹೋರಾಡಿದವರು ನಾಶವಾಗಿ ನಿರ್ನಾಮವಾಗುವರು ನಿನ್ನ ವಿರುದ್ಧ ಯುದ್ಧಮಾಡಿದವರು.</verse>
				<verse number="13">ನಿನ್ನ ದೇವರಾದ ಸರ್ವೇಶ್ವರ ನಾನೇ ಭಯಪಡಬೇಡ, ನಿನಗೆ ನಾನೇ ನೆರವಾಗುವೆ ಎಂತಲೇ, ನಿನ್ನ ಕೈ ಹಿಡಿದುಕೊಳ್ಳುವೆ.</verse>
				<verse number="14">ಸರ್ವೇಶ್ವರ ಇಂತೆನ್ನುತ್ತಾರೆ: “ಹುಳುವಿನಂತಿರುವ ಯಕೋಬೇ, ಇಸ್ರಯೇಲಿನ ಜನತೆಯೇ, ಭಯಪಡಬೇಡ, ನಾನೇ ನಿನಗೆ ಸಹಾಯಕ ಇಸ್ರಯೇಲಿನ ಪರಮಪಾವನ ಸ್ವಾಮಿಯೇ ನಿನಗೆ ವಿಮೋಚಕ.</verse>
				<verse number="15">ಮಾಡಿರುವೆ ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಕುಂಟೆಯಂತೆ. ನೀನು ಒಕ್ಕುತ್ತಾ ಪುಡಿಪುಡಿ ಮಾಡುವೆ ಬೆಟ್ಟಗಳನೆ ಹೊಟ್ಟು ಧೂಳಾಗಿಸುವೆ ಗುಡ್ಡಗಳನೆ.</verse>
				<verse number="16">ನೀನು ತೂರಲು ಅವುಗಳನ್ನು ಕೊಂಡೊಯ್ವುದು ಗಾಳಿ ಚಂಡಮಾರುತವು ಮಾಡುವುದವುಗಳನ್ನು ಚೆಲ್ಲಾಪಿಲ್ಲಿ. ನೀನಾದರೋ ಆನಂದಿಸುವೆ ಸರ್ವೇಶ್ವರ ಸ್ವಾಮಿಯಲಿ.</verse>
				<verse number="17">ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ?</verse>
				<verse number="18">ಹೊರಡಿಸುವೆನು ಬೋಳುಗುಡ್ಡಗಳಲ್ಲಿ ನದಿಗಳನು ತಗ್ಗುತಿಟ್ಟುಗಳಲ್ಲಿ ಒರತೆಗಳನು ಮಾರ್ಪಡಿಸುವೆನು ಕೆರೆಯಾಗಿ ಅರಣ್ಯವನು ಬುಗ್ಗೆಗಳಾಗಿ ಮರುಭೂಮಿಯನು.</verse>
				<verse number="19">ನೆಡುವೆನು ಅಡವಿಯಲ್ಲಿ ದೇವದಾರು ಕಸ್ತೂರಿ, ಜಾಲಿ, ಸುಗಂಧ ಓಲೀವ್ ಮರಗಳನು; ತೋಪಾಗಿ ಬೆಳೆಸುವೆನು ಅರಣ್ಯದೊಳು ತುರಾಯಿ, ತಪಸಿ, ತಿಲಕ ವೃಕ್ಷಗಳನು.</verse>
				<verse number="20">ಇದನು ಕಂಡರಿತು ಗ್ರಹಿಸಿಕೊಳ್ಳುವರು ಜನರು ಮನಸಾರೆ, ನುಡಿವರಾಗ, ‘ಇದನ್ನು ಮಾಡಿದ ಹಸ್ತವು ಸರ್ವೇಶ್ವರ ಸ್ವಾಮಿಯದೇ, ಇದನ್ನು ಸೃಷ್ಟಿಸಿದಾತ ಇಸ್ರಯೇಲಿನ ಪರಮಪಾವನ ಸ್ವಾಮಿಯೇ.’</verse>
				<verse number="21">ಯಕೋಬ್ಯರ ಅರಸನಾದ ಸರ್ವೇಶ್ವರ ಇಂತೆನ್ನುತ್ತಾರೆ: “ನಾಡದೇವತೆಗಳೇ, ಹೊರಗೆ ಬರಲಿ ನಿಮ್ಮ ವ್ಯಾಜ್ಯ ಸಾಬೀತಾಗಲಿ ನಿಮ್ಮ ನ್ಯಾಯ.</verse>
				<verse number="22">ಬನ್ನಿರಿ ಮುಂದಕ್ಕೆ ತಿಳಿಸಿ ಭವಿಷ್ಯತ್ತನು ನಮಗೆ. ವಿವರಿಸಿ ಗತಿಸಿದ ಘಟನೆಗಳು ಏನೇನೆಂದು; ಗ್ರಹಿಸುವೆವು ಅವುಗಳ ಪರಿಣಾಮವನ್ನು ಮನಸ್ಸಿಗೆ ತಂದು, ಇಲ್ಲವಾದರೆ ತಿಳಿಸಿ ನಮಗೆ ಸಂಭವಿಸಲಿರುವುದೇನೆಂದು.</verse>
				<verse number="23">ತಿಳಿಸಿ ನಮಗೆ ಮುಂದೆ ನಡೆಯಬೇಕಾದವುಗಳನು ನಂಬುವೆವು ಆಗ ನೀವು ದೇವರುಗಳೆಂಬುದನು, ಪ್ರದರ್ಶಿಸಿ ಒಳಿತನ್ನಾಗಲಿ ಕೆಡುಕನ್ನಾಗಲಿ ಆಗ ನೋಡುವೆವು ಒಟ್ಟಿಗೆ ನಿಬ್ಬೆರಗಾಗಿ!</verse>
				<verse number="24">ಇಗೋ, ನೀವು ಶೂನ್ಯರೇ ಸರಿ, ನಿಮ್ಮ ಕಾರ್ಯವು ವ್ಯರ್ಥವೇ, ಸರಿ ನಿಮ್ಮನ್ನು ಮರೆಹೋಗುವವರು ತುಚ್ಛರೇ ಸರಿ!</verse>
				<verse number="25">ಹುರಿದುಂಬಿಸಿ ಕರೆತಂದಿರುವೆನು ಒಬ್ಬನನ್ನು ಉತ್ತರದಿಂದ ನನ್ನ ನಾಮವನ್ನು ಪ್ರಚುರಪಡಿಸಲು ಬಂದಿಹನಾತ ಪೂರ್ವದಿಂದ ಕುಂಬಾರನು ಜೇಡಿಮಣ್ಣನ್ನು ತುಳಿಯುವಂತೆ ತುಳಿಯುವನಾತ ರಾಜರನ್ನು ಮಣ್ಣಂತೆ.</verse>
				<verse number="26">ಈ ಘಟನೆಯನ್ನು ಅರುಹಿದವನಾರು ಅದು ನೆರವೇರುವ ಮುಂದೆ? ಇದನ್ನು ಮುನ್ನ ತಿಳಿಸಿದವನಾರು ನಮಗೆ ಗೊತ್ತಾಗುವಂತೆ? ತಿಳಿಸಿದ್ದರೆ ಹೇಳುತ್ತಿದ್ದೆವು ಅವನು ಸತ್ಯವಂತನೆಂದೆ. ಆದರೆ ಇದನ್ನು ತಿಳಿಸಿದವನಿಲ್ಲ ಮುನ್ನ ತಿಳಿಸಬಲ್ಲವನಾರೂ ಇಲ್ಲ ನಿಮ್ಮಿಂದ ಮಾತೊಂದನ್ನು ಕೇಳಿದವನಾರೂ ಇಲ್ಲ.</verse>
				<verse number="27">ಕೇಳಿ, ಇದನ್ನು ಮೊದಲು ತಿಳಿಸಿದವನು ನಾನೇ ಸಿಯೋನಿಗೆ; ಶುಭಸಂದೇಶಕ ದೂತನನ್ನು ಕಳುಹಿಸಿದವನು ನಾನೇ ಜೆರುಸಲೇಮಿಗೆ.</verse>
				<verse number="28">ನಾ ನೋಡಲು ಅವರಲ್ಲಿ ಸಮರ್ಥರಾರು ಇಲ್ಲ ನಾ ಪ್ರಶ್ನಿಸಲು ಉತ್ತರಿಸಬಲ್ಲ ವಿವೇಕಿ ಇಲ್ಲ.</verse>
				<verse number="29">ನಿಶ್ಚಯವಾಗಿ ಆ ದೇವತೆಗಳೆಲ್ಲ ಕ್ಷುದ್ರರೇ‍ ಅವರ ಕಾರ್ಯಗಳೆಲ್ಲ ಶೂನ್ಯವೇ ಆ ಎರಕದ ಬೊಂಬೆಗಳೆಲ್ಲಾ ಬರಿ ಗಾಳಿಯೆ!</verse>
			</chapter>
			<chapter number="42">
				<verse number="1">ಇಗೋ, ನನ್ನ ದಾಸನು! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.</verse>
				<verse number="2">ಆತ ಕೂಗಾಡುವಂಥವನಲ್ಲ, ಕಿರಿಚಾಡುವಂಥವನಲ್ಲ, ಹಾದಿಬೀದಿಗಳಲ್ಲಿ ಅವನ ಧ್ವನಿ ಕೇಳಿಸುವುದೇ ಇಲ್ಲ.</verse>
				<verse number="3">ಮುರಿಯುವುದಿಲ್ಲ ಆತ, ಜಜ್ಜಿದ ದಂಟನು ನಂದಿಸುವುದಿಲ್ಲ ಆತ, ಕಳೆಗುಂದಿದ ದೀಪವನು ತಪ್ಪದೆ ಸಿದ್ಧಿಗೆ ತರುವನಾತ ಸದ್ಧರ್ಮವನು.</verse>
				<verse number="4">ಎಡವಿ ಬೀಳನವನು, ಎದೆಗುಂದನವನು ಜಗದೊಳು ಸ್ಥಾಪಿಸುವ ತನಕ ಸದ್ಧರ್ಮವನು, ಎದುರುನೋಡುವುವು ದ್ವೀಪ-ದ್ವೀಪಾಂತರಗಳು ಆತನ ಧರ್ಮಶಾಸ್ತ್ರವನು.</verse>
				<verse number="5">ಆಕಾಶಮಂಡಲವನ್ನುಂಟುಮಾಡಿ ಹರಡಿದ ದೇವರು, ಭೂಮಂಡಲವನ್ನೂ ಅದರಲ್ಲಿ ಬೆಳೆದುದೆಲ್ಲವನ್ನೂ ವೃದ್ಧಿಗೊಳಿಸುವವನು, ಭೂನಿವಾಸಿಗಳಿಗೆ ಜೀವವನ್ನೂ ಭೂಚರರಿಗೆ ಜೀವಾತ್ಮವನ್ನೂ ಅನುಗ್ರಹಿಸುವಾ ಸರ್ವೇಶ್ವರ ಇಂತೆನ್ನುತಿಹನು:</verse>
				<verse number="6">ಸರ್ವೇಶ್ವರ ಸ್ವಾಮಿಯಾದ ನಾನು ಕೈ ಹಿಡಿದು ಕಾದಿರಿಸುವೆನು ನಿನ್ನನು, ಕರೆದಿಹೆನು ನಿನ್ನನ್ನು ಸದ್ಧರ್ಮ ಸಾಧನೆಗಾಗಿ ಇತ್ತಿರುವೆನು ನಿನ್ನನು ಜನರಿಗೆ ಒಡಂಬಡಿಕೆಯಾಗಿ ನೇಮಿಸಿರುವೆನು ನಿನ್ನನು ರಾಷ್ಟ್ರಗಳಿಗೆ ಬೆಳಕಾಗಿ.</verse>
				<verse number="7">ಕೊಡುವೆ ನೀನು ಕಣ್ಣನ್ನು ಕುರುಡರಿಗೆ ತರುವೆ ಬಂಧಿಗಳನ್ನು ಸೆರೆಯಿಂದ ಹೊರಗೆ ಕತ್ತಲೆಯ ಕಾರಾಗೃಹದಿಂದ ಅವರನ್ನು ಬೆಳಕಿಗೆ.</verse>
				<verse number="8">ನಾನೇ ಸರ್ವೇಶ್ವರ, ನನ್ನ ನಾಮವು ಅದುವೆ. ಸಲ್ಲಿಸೆನು ನನ್ನ ಮಹಿಮೆಯನ್ನು ಮತ್ತೊಬ್ಬರಿಗೆ ನನ್ನ ಸ್ತೋತ್ರವನು ವಿಗ್ರಹಗಳ ಪಾಲಿಗೆ.</verse>
				<verse number="9">ಮುಂತಿಳಿಸಿದ ಸಂಗತಿಗಳಿದೋ ಈಡೇರಿವೆ ಹೊಸ ಸಂಗತಿಗಳನಿದೋ ಪ್ರಕಟಿಸುವೆ ಅವು ತಲೆದೋರುವುದಕ್ಕೆ ಮುಂಚೆಯೇ ನಿಮಗೆ ತಿಳಿಸುವೆ.”</verse>
				<verse number="10">ಸಮುದ್ರಯಾತ್ರಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ದ್ವೀಪಾಂತರ ನಿವಾಸಿಗಳೇ, ನೂತನ ಗೀತವ ಹಾಡಿ ಹೊಗಳಿ ಸರ್ವೇಶ್ವರನನು, ದಿಗಂತಗಳಲ್ಲಿಯೂ ಕೀರ್ತಿಸಿ ಆತನನು.</verse>
				<verse number="11">ಘೋಷಿಸಲಿ ಮರುಭೂಮಿಯೂ ಅದರ ನಗರಗಳೂ ಕೇದಾರಿನವರೂ ಗ್ರಾಮನಿವಾಸಿಗಳೂ ಜಯಘೋಷಮಾಡಲಿ ಸೆಲ ಪಟ್ಟಣದವರೂ ಸಂತೋಷದಿಂದ ಹರ್ಷಧ್ವನಿಗೈಯಲಿ ಆ ಪರ್ವತದ ತುತ್ತತುದಿಗಳಿಂದ.</verse>
				<verse number="12">ಸರ್ವೇಶ್ವರನ ಮಹಿಮೆಯನು ಹೊಗಳಲಿ ಆತನ ಸ್ತೋತ್ರವ ಪಸರಿಸಲಿ ದ್ವೀಪದ್ವೀಪಗಳಲಿ.</verse>
				<verse number="13">ಸರ್ವೇಶ್ವರ ಹೊರಟಿರುವನು ಶೂರನಂತೆ ರೌದ್ರದಿಂದಿರುವನು ಯುದ್ಧವೀರನಂತೆ ಆರ್ಭಟಿಸಿ ಗರ್ಜಿಸುವನು ರಣಕಹಳೆಯಂತೆ ಶತ್ರುಗಳ ಮೇಲೆ ಬೀಳುವನು ಪರಾಕ್ರಮಿಯಂತೆ.</verse>
				<verse number="14">ನನ್ನನ್ನೇ ತಡೆಹಿಡಿದೆನು: ಆದರೀಗ ಸಮಯ ಬಂದಿಹುದು; ಪ್ರಸವವೇದನೆಯನು ಅನುಭವಿಸುವ ಸ್ತ್ರೀಯಂತೆ ಅಬ್ಬರಿಸುವೆನು</verse>
				<verse number="15">ನಾಶಪಡಿಸುವೆನು ಬೆಟ್ಟಗುಡ್ಡಗಳನು ಒಣಗಿಸಿಬಿಡುವೆನು ಹುಲ್ಲು ಸಸಿಗಳನು. ಒಣನೆಲ ಮಾಡುವೆನು ನದಿಗಳನು ಬತ್ತಿಸಿಬಿಡುವೆನು ಕೆರೆಕುಂಟೆಗಳನು.</verse>
				<verse number="16">ಕುರುಡರನ್ನು ನೆಪ್ಪಿಲ್ಲದ ಮಾರ್ಗದಲ್ಲಿ ಬರಮಾಡುವೆನು ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು. ಅವರೆದುರಿನ ಕತ್ತಲನ್ನು ಬೆಳಕಾಗಿಸುವೆನು ಅವರ ಹಾದಿಯ ಡೊಂಕನು ನೇರಮಾಡುವೆನು. ಬಿಡದೆ ಮಾಡುವೆನು ಈ ಕಾರ್ಯಗಳನು.</verse>
				<verse number="17">ಆದರೆ, ಕೆತ್ತಿದ ವಿಗ್ರಹಗಳಲ್ಲಿ ಭರವಸೆಯಿಡುವವರು: “ನೀವೇ ನಮ್ಮ ದೇವರು\ಗಳು ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು; ಅವಮಾನಕ್ಕೆ ಈಡಾಗುವರು ಹಿಂಜರಿದು.</verse>
				<verse number="18">“ಕಿವುಡ ಜನರೇ ಕೇಳಿ ಕುರುಡರಾದ ನೀವು ಕಣ್ಣಿಟ್ಟು ನೋಡಿ;</verse>
				<verse number="19">ನನ್ನ ಸೇವಕನಿಗಿಂತ ಕುರುಡರು ಯಾರು? ನನ್ನ ದೂತನಿಗಿಂತ ಕಿವುಡರು ಯಾರು? ನನ್ನ ಭಕ್ತನಿಗಿಂತ ಕುರುಡರು ಯಾರು? ಸರ್ವೇಶ್ವರನ ದಾಸನಿಗಿಂತ ಅಂಧಕರು ಯಾರು?</verse>
				<verse number="20">ನೀವು ಗಮನಿಸುವುದಿಲ್ಲ ಹಲವಿಷಯಗಳನ್ನು ಕಂಡಿದ್ದರೂ ನೀವು ಕೇಳುವುದಿಲ್ಲ ನಿಮ್ಮ ಕಿವಿಗಳು ತೆರೆದಿದ್ದರೂ.</verse>
				<verse number="21">ಸರ್ವೇಶ್ವರ ಮುಕ್ತಿದಾತನಾದುದರಿಂದ ಧರ್ಮಶಾಸ್ತ್ರಕ್ಕೆ ಮಹಿಮೆಯಿತ್ತು ಅದನ್ನು ಮಹತ್ತಾಗಿಸಿದ.</verse>
				<verse number="22">ಈ ಜನರಾದರೋ ಸೂರೆಯಾಗಿದ್ದಾರೆ ಕೊಳ್ಳೆಗೆ ಈಡಾಗಿ, ಎಲ್ಲರೂ ಬಿದ್ದಿದ್ದಾರೆ ಹಳ್ಳಕೊಳ್ಳಗಳಲ್ಲಿ, ಸೆರೆಮನೆಗಳಲ್ಲಿ ಬಂಧಿಗಳಾಗಿ; ಸುಲಿಗೆಯಾಗಿದ್ದರೂ ಅವರನ್ನು ಬಿಡಿಸುವವರಾರೂ ಇಲ್ಲ ಸೂರೆಯಾಗಿದ್ದರೂ ಅವರನ್ನು ಬಿಟ್ಟುಬಿಡಿ ಎನ್ನುವವರಾರೂ ಇಲ್ಲ.</verse>
				<verse number="23">ಈ ಮಾತಿಗೆ ನಿಮ್ಮಲ್ಲಿ ಕಿವಿಗೊಡುವವರಾರು? ಮುಂದಕ್ಕಾದರೂ ಕಿವಿಗೊಟ್ಟು ಆಲಿಸುವವರಾರು?</verse>
				<verse number="24">ಕೊಟ್ಟವರಾರು ಯಕೋಬನ್ನು ಸುಲಿಗೆಗೆ, ಇಸ್ರಯೇಲನ್ನು ಕೊಳ್ಳೆಗೆ? ಯಾವ ಸರ್ವೇಶ್ವರನಿಗೆ ದ್ರೋಹಮಾಡಿದ್ದೇವೋ ಆತನೇ ಅಲ್ಲವೇ? ಜನರು ಆತನ ಮಾರ್ಗದಲ್ಲಿ ನಡೆಯದೇ, ಆತನ ಉಪದೇಶವನ್ನು ಕೇಳದೆಹೋದರಲ್ಲವೆ?</verse>
				<verse number="25">ಎಂದೇ ಸುರಿಸಿದನಾತ ರೋಷಾಗ್ನಿಯನು, ಯುದ್ಧದ ರೌದ್ರವನು ಅವರ ಮೇಲೆಲ್ಲ; ಸುತ್ತಲು ಉರಿ ಹತ್ತಿದರೂ ಅವರು ಅರಿಯಲಿಲ್ಲ, ದಹಿಸಿದರೂ ಅವರು ಕಲಿಯಲಿಲ್ಲ.</verse>
			</chapter>
			<chapter number="43">
				<verse number="1">ಈಗಲಾದರೋ ಯಕೋಬ ವಂಶವೇ, ಇಸ್ರಯೇಲ್ ಸಂತಾನವೇ ಕೇಳು: ನಿನ್ನನ್ನು ಸೃಷ್ಟಿಸಿದ, ರೂಪಿಸಿದ ಸರ್ವೇಶ್ವರನ ನುಡಿಯನ್ನು ಕೇಳು; “ಭಯಪಡಬೇಡ, ನಿನ್ನನ್ನು ರಕ್ಷಿಸಿದಾತ ನಾನಲ್ಲವೆ? ನಿನ್ನನ್ನು ಹೆಸರು ಹಿಡಿದು ಕರೆದಾತ ನಾನಲ್ಲವೆ? ನೀನು ನನ್ನವನೇ ಅಲ್ಲವೆ?</verse>
				<verse number="2">ನಾನೇ ಇರುವೆ ನಿನ್ನ ಸಂಗಡ ನೀ ಜಲರಾಶಿಯನ್ನು ದಾಟುವಾಗ ಮುಳುಗಿಸದು ನದಿ ನೀ ಅದನ್ನು ಹಾದುಹೋಗುವಾಗ ಸುಡದು ಬೆಂಕಿ, ದಹಿಸದು ಜ್ವಾಲೆ, ಅದರ ಮಧ್ಯೆ ನೀ ನಡೆಯುವಾಗ.</verse>
				<verse number="3">ನಿನ್ನ ದೇವರಾದ ಸರ್ವೇಶ್ವರ ನಾನು, ಇಸ್ರಯೇಲರ ಪರಮಪಾವನ ಸ್ವಾಮಿ, ನಿನ್ನ ರಕ್ಷಕ ನಾನು. ಈಡುಮಾಡಿದ್ದೇನೆ ಈಜಿಪ್ಟನ್ನು ನಿನ್ನ ವಿಮೋಚನೆಗಾಗಿ ಕೊಟ್ಟಿದ್ದೇನೆ ಸುಡಾನ್ ಸೆಬಾ ನಾಡುಗಳನ್ನು ನಿನಗೆ ಈಡಾಗಿ.</verse>
				<verse number="4">ನೀನೆನ್ನ ದೃಷ್ಟಿಗೆ ಅಮೂಲ್ಯನು, ಘನವಂತನು, ಅತಿಪ್ರಿಯನು. ಎಂದೇ ನಿನ್ನ ಪ್ರಾಣರಕ್ಷಣೆಗಾಗಿ ತ್ಯಜಿಸುವೆನು ಜನರನ್ನೂ ಜನಾಂಗಗಳನ್ನೂ.</verse>
				<verse number="5">ಭಯಪಡಬೇಡ, ನಾನಿರುವೆ ನಿನ್ನ ಸಂಗಡ ಕರೆತರುವೆ ನಿನ್ನ ಸಂತತಿಯನ್ನು ಮೂಡಣದಿಂದ ಒಟ್ಟುಗೂಡಿಸುವೆ ನಿನ್ನವರನ್ನು ಪಡುವಣದಿಂದ.</verse>
				<verse number="6">ನಾನಪ್ಪಣೆ ಕೊಡುವೆ ‘ಬೀಳ್ಕೊಡು’ ಎಂದು ಬಡಗಲಿಗೆ ‘ತಡೆಯಬೇಡ’ ಎಂದು ನಾನೇ ಹೇಳುವೆ ತೆಂಕಲಿಗೆ. ಹೀಗೆ ಬರಮಾಡುವೆ ನನ್ನ ಕುವರರನ್ನು ದೂರದಿಂದ ಬರಮಾಡುವೆ ನನ್ನ ಕುವರಿಯರನ್ನು ದಿಗಂತಗಳಿಂದ.</verse>
				<verse number="7">ಕರೆತರುವೆ ಈ ಪರಿ ನನ್ನ ನಾಮಧಾರಿಗಳೆಲ್ಲರನು ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿದವರನು.</verse>
				<verse number="8">ಕರೆಗೊಡಿರಿ ಆ ಜನರಿಗೆ ಕಣ್ಣಿದ್ದರೂ ಕುರುಡರಾದವರಿಗೆ ಕಿವಿಯಿದ್ದರೂ ಕಿವುಡಾದವರಿಗೆ.</verse>
				<verse number="9">ಬರಲಿ, ಎಲ್ಲಾ ಜನಾಂಗಗಳು ಒಟ್ಟಿಗೆ ನೆರೆಯಲಿ, ಸಕಲ ದೇಶಿಯರು ಇಲ್ಲಿಯೇ. ಅವರ ದೇವರುಗಳಲ್ಲಿ ಭವಿಷ್ಯವನ್ನು ನುಡಿಯಬಲ್ಲವರು ಯಾರು? ಗತಿಸಿದ ಘಟನೆಗಳನ್ನು ಮುಂತಿಳಿಸಿದವರಾರು? ಕರೆತರಲಿ, ಆ ದೇವರುಗಳು ಸಾಕ್ಷಿಗಳನು ಸ್ಥಾಪಿಸಿಕೊಳ್ಳಲಿ, ತಾವು ಸತ್ಯವಂತರೆಂಬುದನು; ರುಜುಪಡಿಸಲಿ ಕೇಳುವವರಿಗೆ ತಮ್ಮ ಮಾತು ನಿಜವೆಂಬುದನು.</verse>
				<verse number="10">ಇಂತೆನ್ನುತ್ತಾರೆ ಸರ್ವೇಶ್ವರ: “ನೀವೇ ನನಗೆ ಸಾಕ್ಷಿಗಳು; ನನ್ನಿಂದ ಆಯ್ಕೆಯಾದ ನನ್ನ ದಾಸರು; ಏಕೆನೆ ನಾನೇ ಪರಮಾತ್ಮನೆಂದು ಅರಿತು, ವಿಶ್ವಾಸವಿಟ್ಟು, ಗ್ರಹಿಸಬೇಕಾದವರು; ದೇವರಾರೂ ನನಗಿಂತ ಮುಂದೆ ಇರಲಿಲ್ಲ ನನ್ನಾನಂತರವೂ ಇರುವುದಿಲ್ಲ.</verse>
				<verse number="11">“ನಾನು, ನಾನೇ ಸರ್ವೇಶ್ವರ, ನನ್ನ ಹೊರತು ಇಲ್ಲ ಬೇರೆ ಉದ್ಧಾರಕ.</verse>
				<verse number="12">ಶ್ರುತಪಡಿಸಿದವನು ನಾನೇ, ಉದ್ಧರಿಸಿದವನು ನಾನೇ, ಘೋಷಿಸಿದವನು ನಾನೇ. ಇದನ್ನು ಮಾಡಿಲ್ಲ ಅನ್ಯದೇವರಾರು ನಿಮ್ಮ ಮಧ್ಯೆ. ನನಗೆ ಸಾಕ್ಷಿಗಳು ನೀವೇ, ದೇವರು ನಾನೊಬ್ಬನೇ.</verse>
				<verse number="13">ಹೌದು, ನಾನೇ ಪರಮಾತ್ಮ ಆದಿಯಿಂದ ಬಿಡಿಸುವವರಾರು ಇಲ್ಲ ನನ್ನ ಕೈಯಿಂದ ನಾಗೈದುದನು ತಡೆಯಲಾಗದು ಯಾರಿಂದ.” ಈ ಪರಿ ನುಡಿದಿಹನು ಸರ್ವೇಶ್ವರನು, ನಿಮ್ಮ ಉದ್ಧಾರಕನು, ಇಸ್ರಯೇಲಿನ ಪರಮಪಾವನನು;</verse>
				<verse number="14">“ಬಾಬಿಲೋನಿಯಗೆ ಕಳುಹಿಸುವೆ ಒಬ್ಬಾತನನು ನಿಮಗಾಗಿ ಮುರಿವನಾತ ಆ ಕಾರಾಗೃಹದ ಕಂಬಿಗಳನು ತುಂಡುತುಂಡಾಗಿ ಬಾಬಿಲೋನಿಯರ ಕೂಗಾಟವನು ಮಾರ್ಪಡಿಸುವೆನು ಗೋಳಾಟವನ್ನಾಗಿ.</verse>
				<verse number="15">ನಾನೇ ಸರ್ವೇಶ್ವರನು, ನಿಮ್ಮ ಪರಮಪೂಜ್ಯನು ಇಸ್ರಯೇಲಿನ ಸೃಷ್ಟಿಕರ್ತನು, ನಿಮ್ಮ ಅರಸನು.”</verse>
				<verse number="16">ಸಮುದ್ರದ ಮಧ್ಯೆ ದಾರಿಮಾಡಿದವನಾರೋ, ಭೋರ್ಗರೆವ ಜಲರಾಶಿಗಳಲ್ಲಿ ಮಾರ್ಗವೇರ್ಪಡಿಸಿದವನಾರೋ,</verse>
				<verse number="17">ಅಶ್ವರಥಭಟಸೈನ್ಯಗಳನ್ನು ಹೊರಡಿಸಿದವನಾರೋ, ಅವು ಬಿದ್ದು ಏಳಲಾಗದೆ, ಬತ್ತಿಕರಗಿಹೋಗುವಂತೆ ಮಾಡಿದವನಾರೋ, ಆ ಸ್ವಾಮಿ ಸರ್ವೇಶ್ವರ ನುಡಿದ ಮಾತಿದೋ;</verse>
				<verse number="18">“ಗತಿಸಿಹೋದ ಘಟನೆಗಳನ್ನು ನೆನೆಯಬೇಕಾಗಿಲ್ಲ ಪುರಾತನ ಕಾರ್ಯಗಳ ನೆನಸಿಕೊಳ್ಳಬೇಕಾಗಿಲ್ಲ.</verse>
				<verse number="19">ಇಗೋ, ನೂತನ ಕಾರ್ಯವನು ನಾನೆಸಗುವೆ ಈಗಲೇ ಅದು ತಲೆದೋರುತಲಿದೆ, ನಿಮಗೆ ಕಾಣುವುದಿಲ್ಲವೇ? ಮಾರ್ಗವನ್ನು ಏರ್ಪಡಿಸುವೆ ಮರುಭೂಮಿಯಲಿ, ಹರಿಸುವೆ ತೊರೆಗಳನ್ನು ಅರಣ್ಯದಲಿ.</verse>
				<verse number="20">ಕಾಡುಮೃಗಗಳು, ನರಿ, ಉಷ್ಟ್ರಪಕ್ಷಿಗಳು ಕೂಗಿ ಕೊಂಡಾಡುವುವು ನನ್ನನು. ಏಕೆನೆ ಕೊಡುವೆನು ನೀರನ್ನು ಮರುಭೂಮಿಯಲಿ ಹರಿಸುವೆನು ತೊರೆನದಿಗಳನ್ನು ಅರಣ್ಯದಲಿ.</verse>
				<verse number="21">ನಾ ಸೃಷ್ಟಿಸಿದ ಆಪ್ತ ಜನಕೆ ನೀಡುವೆನು ಜಲಪಾನವನು; ಎಂದೇ ಸ್ತುತಿಸಿಕೊಂಡಾಡುವರು ನನ್ನನು.”</verse>
				<verse number="22">“ಯಕೋಬೇ, ನೀನೆನ್ನ ನಾಮಸ್ಮರಣೆ ಮಾಡದೆಹೋದೆ; ಇಸ್ರಯೇಲೇ, ನನ್ನ ವಿಷಯದಲ್ಲಿ ನೀನು ಬೇಸರಗೊಂಡೆ.</verse>
				<verse number="23">ಕುರಿಮೇಕೆಗಳನ್ನು ನೀನು ತರಲಿಲ್ಲ ನನಗೆ ಹೋಮಕ್ಕಾಗಿ ಬಲಿಗಳನ್ನು ಅರ್ಪಿಸಲಿಲ್ಲ ನನ್ನ ಘನತೆಗಾಗಿ ನಾ ನಿನ್ನನು ಒತ್ತಾಯಿಸಲಿಲ್ಲ ನೈವೇದ್ಯಕ್ಕಾಗಿ ನಾ ನಿನ್ನನು ಬೇಸರಗೊಳಿಸಲಿಲ್ಲ ಧೂಪಾರತಿಗಾಗಿ.</verse>
				<verse number="24">ನನಗೋಸ್ಕರ ನೀನು ಹಣ ತೆತ್ತು ಅಗರಬತ್ತಿ ತರಲಿಲ್ಲ ಯಜ್ಞಪಶುಗಳ ವಪೆಯಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಬದಲಿಗೆ ನನ್ನನ್ನು ಪೀಡಿಸಿರುವೆ ನಿನ್ನ ಪಾಪಗಳಿಂದ ಬೇಸರಗೊಳಿಸಿರುವೆ ನನ್ನನು ನಿನ್ನ ದೋಷಗಳಿಂದ.</verse>
				<verse number="25">ಆದರೂ ನಾನೇ ನಾನಾಗಿ ಅಳಿಸಿಬಿಡುವೆ ನಿನ್ನ ದ್ರೋಹಗಳನು, ನನ್ನ ನೆನಪಿನಿಂದ ತೆಗೆದುಹಾಕುವೆ ನಿನ್ನ ಪಾಪಗಳನು.</verse>
				<verse number="26">ಮಂಡಿಸು ನನ್ನ ವಿರುದ್ಧ ನಿನ್ನ ಆಪಾದನೆಯನ್ನು; ಒಟ್ಟಿಗೆ ವಾದಿಸೋಣ ಮಂಡಿಸು ನಿನ್ನ ನ್ಯಾಯವನ್ನು; ನೀನು ನಿರ್ದೋಷಿಯೆಂದು ರುಜುಪಡಿಸು ನೋಡೋಣ.</verse>
				<verse number="27">ಪಾಪಿಷ್ಟನಾಗಿದ್ದನು ನಿನ್ನ ಮೂಲಪಿತೃವು ನನಗೆ ದ್ರೋಹಿಗಳಾಗಿದ್ದರು ನಿನ್ನ ಪರವಾದಿಗಳು ನನ್ನ ಪವಿತ್ರಾಲಯವನ್ನು ಹೊಲೆಮಾಡಿದರು ನಿನ್ನ ಅಧಿಪತಿಗಳು.</verse>
				<verse number="28">ಎಂದೇ ಗುರಿಮಾಡಿದೆ ಯಕೋಬನ್ನು ಶಾಪಕ್ಕೆ ಈಡುಪಡಿಸಿದೆ ಇಸ್ರಯೇಲನ್ನು ನಿಂದೆದೂಷಣೆಗೆ.”</verse>
			</chapter>
			<chapter number="44">
				<verse number="1">“ಕೇಳೀಗ ನನ್ನ ದಾಸ ಯಕೋಬೇ, ನಾನು ಆರಿಸಿಕೊಂಡ ಇಸ್ರಯೇಲೇ,</verse>
				<verse number="2">ನಿನ್ನನ್ನು ಸೃಷ್ಟಿಸಿದ ಸರ್ವೇಶ್ವರ ನಾನೆ ತಾಯ ಗರ್ಭದಿಂದ ನಿನ್ನನ್ನು ರೂಪಿಸಿದವನು ನಾನೆ ಅಂದಿನಿಂದ ನಿನಗೆ ನೆರವಾಗುತ್ತಾ ಬಂದವನು ನಾನೆ. ಭಯಪಡಬೇಡ, ನನ್ನ ದಾಸ ಯಕೋಬನೇ, ಅಂಜಬೇಡ, ನಾನು ಆರಿಸಿಕೊಂಡ ಯೆಶುರೂನೇ.</verse>
				<verse number="3">ಮಳೆಗರೆವೆನು ಬತ್ತಿದ ಭೂಮಿಯಲಿ ಹರಿಸುವೆನು ಕಾಲುವೆಗಳನು ಒಣನೆಲದಲಿ. ಮಳೆಗರೆವೆನು ನನ್ನಾತ್ಮವನು ನಿನ್ನ ಸಂತಾನದ ಮೇಲೆ ನನ್ನ ಆಶೀರ್ವಾದವನು ನಿನ್ನ ಸಂತತಿಯ ಮೇಲೆ.</verse>
				<verse number="4">ವೃದ್ಧಿಯಾಗುವರವರು ನೀರನಾಲೆ ಬದಿಯ ಪಚ್ಚೆಪಸಿರಂತೆ, ಹರಿವ ಕಾಲುವೆಗಳ ಬಳಿಯ ಜೊಂಡುಹುಲ್ಲಿನಂತೆ.</verse>
				<verse number="5">ಹೇಳಿಕೊಳ್ಳುವನೊಬ್ಬನು ತಾನು ಸರ್ವೇಶ್ವರನ ಶರಣನೆಂದು ಹೆಸರಿಸಿಕೊಳ್ಳುವನು ಇನ್ನೊಬ್ಬನು ತಾನು ಯಕೋಬ್ಯನೆಂದು ಕೈಯಲ್ಲಿ ಹಚ್ಚೆ ಹೊಯ್ದುಕೊಳ್ಳುವನು ಮತ್ತೊಬ್ಬನು ಸರ್ವೇಶ್ವರನ ದಾಸನೆಂದು ಬಿರುದನ್ನು ಧರಿಸಿಕೊಳ್ಳುವನವನು ತಾನು ಇಸ್ರಯೇಲ್ಯನೆಂದು.”</verse>
				<verse number="6">ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ, ಇಸ್ರಯೇಲರ ಅರಸ, ಅವರ ಉದ್ಧಾರಕ: “ಆದಿಯು ನಾನೇ, ಅಂತ್ಯವು ನಾನೇ, ನನ್ನ ಹೊರತು ದೇವರಾರು ಇಲ್ಲ ಬೇರೆ.</verse>
				<verse number="7">ನನಗೆ ಸಮಾನರು ಯಾರು? ರುಜುಪಡಿಸಲಿ, ನನ್ನ ಎದುರಿಗೆ ಬಂದು ವಾದಿಸಿ ಸ್ಥಿರಪಡಿಸಲಿ. ನರ ಸೃಷ್ಟಿಯಾದಂದಿನಿಂದ ನಡೆದುದೆಲ್ಲವನು ತಿಳಿಸಲಿ ಮುಂದಿನವುಗಳನು, ಭವಿಷ್ಯತ್ತುಗಳನು, ಈಗ ಊಹಿಸಿ ಹೇಳಲಿ.</verse>
				<verse number="8">ಹೆದರಬೇಡಿ, ಅಂಜದಿರಿ, ನನ್ನ ಜನರೇ, ನನಗೆ ಸಾಕ್ಷಿಗಳು ನೀವೇ; ಪೂರ್ವಕಾಲದಿಂದ ನಡೆದವುಗಳನು ನಾ ನಿಮಗೆ ಮುಂತಿಳಿಸಿ ಶ್ರುತಪಡಿಸಿಲ್ಲವೆ? ನನ್ನ ಹೊರತು ಬೇರೆ ದೇವನಿರುವನೆ? ನನ್ನ ಹೊರತು ಬೇರೆ ಸೇನಾಧೀಶ್ವರನಿರುವನೆ? ಅಂಥವನಾರೋ ನಾನರಿಯೆ.”</verse>
				<verse number="9">ವಿಗ್ರಹಗಳನ್ನು ಕೆತ್ತುವವರೆಲ್ಲರು ನಿರರ್ಥಕರು; ಅವರ ಇಷ್ಟಬೊಂಬೆಗಳು ಏತಕ್ಕೂ ಬಾರವು; ಅವುಗಳಲ್ಲಿ ವಿಶ್ವಾಸವಿಡುವವರು ಕುರುಡರು, ತಿಳುವಳಿಕೆ ಇಲ್ಲದವರು. ಅಂಥವರು ನಾಚಿಕೆಗೆ ಗುರಿಯಾಗುವರು.</verse>
				<verse number="10">ದೇವತೆಯನ್ನು ರೂಪಿಸುವವರು ಹಾಗೂ ನಿರರ್ಥಕ ಬೊಂಬೆಗಳನ್ನು ಎರಕಹೊಯ್ಯುವವರು ನಿಷ್ಪ್ರಯೋಜಕರು.</verse>
				<verse number="11">ವಿಗ್ರಹಾರಾಧಕರೆಲ್ಲರೂ ಆಶಾಭಂಗಪಡುವರು. ಅದನ್ನು ಕೆತ್ತಿದವರು ಕೇವಲ ಮನುಷ್ಯ ಮಾತ್ರರು. ಅವರೆಲ್ಲರು ಇಲ್ಲಿಗೆ ಕೂಡಿಬರಲಿ; ನಿಶ್ಚಯವಾಗಿ ಅವರು ಹೆದರಿ ಲಜ್ಜೆಪಡುವರು.</verse>
				<verse number="12">ಕಮ್ಮಾರನು ಮುಟ್ಟನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸ ಮಾಡುತ್ತಾನೆ; ಬಲವಾದ ತೋಳಿನಿಂದ ಚಮಟಿಕೆ ಹಿಡಿದು ಬಡಿದು ವಿಗ್ರಹವನ್ನು ರೂಪಿಸುತ್ತಾನೆ; ಹಸಿದು ಬಳಲುತ್ತಾನೆ, ಬಾಯಾರಿ ಸೊರಗುತ್ತಾನೆ.</verse>
				<verse number="13">ಬಡಗಿಯು ಮರಕ್ಕೆ ನೂಲು ಹಿಡಿದು, ಮೊಳೆಯಿಂದ ಗೆರೆ ಎಳೆಯುತ್ತಾನೆ; ಕೈವಾರದಿಂದ ಗುರುತಿಸುತ್ತಾನೆ, ಉಳಿ ಬಾಚಿಗಳಿಂದ ಕೆತ್ತುತ್ತಾನೆ; ಸುಂದರವಾದ ನರನಂತೆ ರೂಪಿಸಿ ಮಂದಿರದಲ್ಲಿ ಇಡಲು ಯೋಗ್ಯವಾಗುವಂತೆ ಮಾಡುತ್ತಾನೆ.</verse>
				<verse number="14">ತನ್ನ ಕೆಲಸಕ್ಕಾಗಿ ದೇವದಾರುಗಳನ್ನು ಕಡಿಯುತ್ತಾನೆ, ತುರಾಯಿ ಅಲ್ಲೋನ್ ಮರಗಳನ್ನು ಆರಿಸಿಕೊಳ್ಳುತ್ತಾನೆ; ಅವುಗಳನ್ನು ವನವೃಕ್ಷಗಳ ನಡುವೆ ಬೆಳೆಸುತ್ತಾನೆ; ಪೀತದಾರ ಮರವನ್ನು ನೆಟ್ಟು, ಮಳೆ ಸುರಿದು ಬೆಳೆಯುವವರೆಗೂ ಕಾಯುತ್ತಾನೆ,</verse>
				<verse number="15">ಅದರ ಒಂದು ಭಾಗ ಒಲೆಗಾಗುತ್ತದೆ, ಚಳಿ ಕಾಯಿಸಿಕೊಳ್ಳುವುದಕ್ಕೆ ಆಗುತ್ತದೆ, ರೊಟ್ಟಿ ಸುಡುವುದಕ್ಕಾಗುತ್ತದೆ. ಇನ್ನೊಂದು ಭಾಗದಿಂದ ದೇವತೆಯನ್ನು ಮಾಡಿ ಮನುಷ್ಯ ಪೂಜಿಸುತ್ತಾನೆ; ವಿಗ್ರಹ ಕೆತ್ತಿ ಅದಕ್ಕೆ ಅಡ್ಡಬೀಳುತ್ತಾನೆ.</verse>
				<verse number="16">ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುತ್ತಾನೆ. ಅದು ಮಾಂಸ ಬೇಯಿಸಲಾಗುತ್ತದೆ, ಆ ಸುಟ್ಟ ಮಾಂಸದಿಂದ ಹಸಿವೆ ತೀರಿಸಿಕೊಳ್ಳುತ್ತಾನೆ. ಆ ಬೆಂಕಿಯಿಂದ ಮೈ ಬೆಚ್ಚಗಾಯಿತು,” ಎಂದುಕೊಳ್ಳುತ್ತಾನೆ.</verse>
				<verse number="17">ಉಳಿದ ಭಾಗದಿಂದ ತನ್ನ ದೇವತೆಯ ವಿಗ್ರಹವನ್ನು ಕೆತ್ತಿ, ಅದಕ್ಕೆ ಎರಗಿ ಅಡ್ಡಬೀಳುತ್ತಾನೆ; “ನೀನೇ ನನ್ನ ದೇವರು; ನನ್ನನ್ನು ರಕ್ಷಿಸು,” ಎಂದು ಪ್ರಾರ್ಥಿಸುತ್ತಾನೆ.</verse>
				<verse number="18">ಇಂಥವರು ಮಂದಮತಿಗಳು, ಏನೂ ಗ್ರಹಿಸಲಾರದವರು; ಅವರ ಕಣ್ಣು ಕಾಣದಂತೆಯೂ ಹೃದಯ ಗ್ರಹಿಸದಂತೆಯೂ ಅವರಿಗೆ ಅಂಟು ಬಳಿಯಲಾಗಿದೆ.</verse>
				<verse number="19">“ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದ್ದೇನೆ. ಹೌದು, ಅದರ ಕೆಂಡದಲ್ಲಿ ರೊಟ್ಟಿಮಾಡಿ, ಮಾಂಸ ಸುಟ್ಟು ತಿಂದಿದ್ದೇನೆ; ಮಿಕ್ಕಿದ್ದರಿಂದ ವಿಗ್ರಹಮಾಡುವುದು ಸರಿಯೇ? ಆ ಮರದ ತುಂಡಿಗೆ ಅಡ್ಡಬೀಳುವುದು ಅಸಹ್ಯವಲ್ಲವೆ?” ಎಂದುಕೊಳ್ಳುವಷ್ಟು ವಿವೇಕ ಯಾರಿಗೂ ಇಲ್ಲ; ಯಾರೂ ಇದನ್ನು ಮನಸ್ಸಿನಲ್ಲಿ ಅರ್ಥೈಸಿಕೊಳ್ಳುವುದಿಲ್ಲ.</verse>
				<verse number="20">ಅಂಥವನು ಮುಕ್ಕುವುದು ಬೂದಿಯನ್ನೇ; ಅವನ ಹೃದಯ ಮೋಸಗೊಂಡು ಅವನನ್ನು ತಪ್ಪುದಾರಿಗೆ ಎಳೆದಿದೆ. ಎಂದೇ, ಅವನು ಅಂಗೈ ಹುಣ್ಣಿನಂತಿರುವ ಆ ಸುಳ್ಳನ್ನೂ ಅರಿಯದೆ ಇದ್ದಾನೆ; ತನ್ನನ್ನೇ ರಕ್ಷಿಸಿಕೊಳ್ಳಲು ಆಗದೆ ಇದ್ದಾನೆ.</verse>
				<verse number="21">“ಯಕೋಬೇ, ಇಸ್ರಯೇಲೇ, ನೆನಪಿನಲ್ಲಿಡು ಇದನ್ನು: ನೀನೆನ್ನ ದಾಸನು, ಇಸ್ರಯೇಲ್, ನಿನ್ನ ನಿರ್ಮಿಸಿದವನು ನಾನು; ನೀನೆನ್ನ ದಾಸನು, ನಿನ್ನನ್ನು ನಾನು ಮರೆತುಬಿಡೆನು.</verse>
				<verse number="22">ಪರಿಹರಿಸಿದೆ ನಿನ್ನ ದ್ರೋಹಗಳನ್ನು ಮಂಜಿನಂತೆ ಚದರಿಸಿದ್ದೇನೆ ನಿನ್ನ ಪಾಪಗಳನು ಮೋಡದಂತೆ ವಿಮೋಚಿಸಿದ್ದೇನೆ ನೀ ನನಗೆ ಅಭಿಮುಖನಾಗಬೇಕೆಂದೆ.”</verse>
				<verse number="23">ಜಯ ಜಯಕಾರ ಮಾಡು ಓ ಆಕಾಶವೇ, ಜಯಘೋಷ ಮಾಡು ಭೂ ತಳವೇ, ಹರ್ಷಧ್ವನಿಗೈಯಿರಿ ಬೆಟ್ಟಗುಡ್ಡಗಳೇ ವನವೃಕ್ಷಗಳೇ. ವಿಮೋಚಿಸಿದನು ಸರ್ವೇಶ್ವರ ಯಕೋಬನನು, ಇಸ್ರಯೇಲನ್ನು ರಕ್ಷಿಸಿ ಪ್ರಚಾರಗೊಳಿಸಿದನು ತನ್ನ ಮಹಿಮೆಯನು.</verse>
				<verse number="24">ತಾಯ ಗರ್ಭದಿಂದ ರೂಪಿಸಿ ನಿನ್ನನು ಹೊರತಂದ ಸರ್ವೇಶ್ವರ ಹೇಳಿಹನು ಇದನ್ನು: “ಸರ್ವವನು ಸೃಷ್ಟಿಸಿದ ಸರ್ವೇಶ್ವರನು ನಾನೆ ಗಗನಮಂಡಲವನು ವಿಸ್ತರಿಸಿದವನು ನಾನೆ ಭೂಮಂಡಲವನು ಹರಡಿದವನು ನಾನೆ ನನಗಾಗ ನೆರವಾಗಲು ಯಾರಾದರೂ ಇದ್ದರೆ?</verse>
				<verse number="25">ಸುಳ್ಳುಶಕುನ ಹೇಳುವವರನು ನಿರರ್ಥಕಗೊಳಿಸುವವನು ನಾನೆ ಕಣಿ ಹೇಳುವವರನು ಮರುಳುಗೊಳಿಸುವವನು ನಾನೆ ವಿವೇಕಿಗಳೊಡನೆ ವಾದಿಸಿ ಅವರ ವಿವೇಕವೇ ಅವಿವೇಕವೆಂದು ತೋರಿಸಿದವನು ನಾನೆ.</verse>
				<verse number="26">ನನ್ನ ದಾಸನ ಮಾತನ್ನಾದರೋ ದೃಢೀಕರಿಸುವವನು ನಾನೆ ನನ್ನ ದೂತರ ಯೋಜನೆಯನ್ನು ಸಫಲಗೊಳಿಸುವವನು ನಾನೆ ಜನನಿವಾಸವಾಗುವುದು ಜೆರುಸಲೇಮ್ ನಗರವು ಪುನಃ ಕಟ್ಟಲ್ಪಡುವುವು ಜುದೇಯ ಪಟ್ಟಣಗಳು. ಅಲ್ಲಿ ಹಾಳುಬಿದ್ದವುಗಳು ಮರಳಿ ಎದ್ದು ನಿಲ್ಲುವುವು.</verse>
				<verse number="27">‘ಬತ್ತಿಹೋಗು’ ಎಂದು ಜಲರಾಶಿಗಳಿಗೆ ‘ಒಣಗಿಹೋಗು’ ಎಂದು ನಿನ್ನ ಸೇರುವ ನದಿಗಳಿಗೆ ಅಪ್ಪಣೆ ಕೊಡುವಾತನು ನಾನೆ.</verse>
				<verse number="28">	ಕೋರೆಷನಿಗೆ ಇಂತೆನ್ನುವೆನು ನಾನು: ನನ್ನ ಮಂದೆ ಕಾಯುವವನು ನೀನು ನನ್ನ ಇಷ್ಟಾರ್ಥವನು ನೆರವೇರಿಸುವವನು ನೀನು; 'ಪುನಃ ನಿರ್ಮಾಣವಾಗುವೆ' ಎನ್ನುವೆ ಜೆರುಸಲೇಮಿಗೆ, ನೀನು; ‘ಪುನಃ ನಿನಗೆ ಅಸ್ತಿವಾರ ಹಾಕಿಸುವೆ’ ಎನ್ನುವೆ ಆ ದೇವಾಲಯಕೆ ನೀನು.”</verse>
			</chapter>
			<chapter number="45">
				<verse number="1">	ಇಂತೆಂದರು ಸರ್ವೇಶ್ವರ ತಾನು ಅಭಿಷೇಕಿಸಿದ ಕೋರೆಷನಿಗೆ “ರಾಷ್ಟ್ರಗಳನ್ನು ನೀ ಸದೆಬಡಿಯುವಂತೆ ರಾಜಮಹಾರಾಜರನು ನಿಶ್ಯಸ್ತ್ರರನ್ನಾಗಿ ಮಾಡುವಂತೆ ಮುಚ್ಚಲಾಗದ ಹಾಗೆ ಬಾಗಿಲು ಹೆಬ್ಬಾಗಿಲುಗಳನ್ನು ತೆರೆಯುವಂತೆ ನಾ ನಿನ್ನ ಕೈಹಿಡಿದು ನಡೆಸುವೆನು ಮುಂದೆ.</verse>
				<verse number="2">ನಿನ್ನ ಮುಂದೆ ಸಾಗುವೆನು ನಾನು ಸಮಮಾಡುವೆನು ಬೆಟ್ಟಗುಡ್ಡಗಳನು ಒಡೆದುಹಾಕುವೆನು ಕಂಚಿನ ಕದಗಳನು ಮುರಿದುಬಿಡುವೆನು ಕಬ್ಬಿಣದ ಅಗುಳಿಗಳನು.</verse>
				<verse number="3">ಹೆಸರು ಹಿಡಿದು ನಿನ್ನ ಕರೆಯುವ ಸರ್ವೇಶ್ವರ ನಾನು ಕೊಡುವೆ ನಾ ನಿನಗೆ ಕತ್ತಲಲಿ ಬಚ್ಚಿಟ್ಟ ಭಂಡಾರಗಳನು ಗುಪ್ತಸ್ಥಳಗಳಲ್ಲಿ ಮರೆಮಾಡಿರುವ ನಿಧಿನಿಕ್ಷೇಪಗಳನು. ಈ ಪರಿ ಅರಿತುಕೊಳ್ಳುವೆ ನೀನು ನಾನೇ ಇಸ್ರಯೇಲರ ದೇವರೆಂಬುದನು.</verse>
				<verse number="4">ನನ್ನ ಸೇವಕನಾದ ಯಕೋಬನ ನಿಮಿತ್ತ ನಾನು ಆರಿಸಿಕೊಂಡ ಇಸ್ರಯೇಲಿನ ನಿಮಿತ್ತ ನನ್ನ ಅರಿವೇ ಇಲ್ಲದ ನಿನ್ನನು ಹೆಸರು ಹಿಡಿದು ಕರೆದಿರುವೆನು, ಬಿರುದಿತ್ತು ಸನ್ಮಾನಿಸಿರುವೆನು.</verse>
				<verse number="5">ಸರ್ವೇಶ್ವರ ನಾನಲ್ಲದೆ ಬೇರಾರು ಅಲ್ಲ ನನ್ನ ಹೊರತು ಯಾವ ದೇವರು ಇಲ್ಲ. ನೀನು ನನ್ನನ್ನು ಅರಿಯದವನಾಗಿರುವೆ ಆದರೂ ನಿನ್ನನ್ನು ಶಸ್ತ್ರಧಾರಿಯಾಗಿಸುವೆ.</verse>
				<verse number="6">ಇದ ಕಂಡು ತಿಳಿಯುವರೆಲ್ಲರು ಪೂರ್ವದಿಂದ ಪಶ್ಚಿಮದವರೆಗು: ನಿನ್ನ ವಿನಾ ದೇವರಾರು ಇಲ್ಲವೆಂದು ನಾನೇ ಸರ್ವೇಶ್ವರ ಮತ್ತಾರು ಅಲ್ಲವೆಂದು;</verse>
				<verse number="7">ಬೆಳಕಿಗೂ ಕತ್ತಲಿಗೂ ನಾನೆ ಸೃಷ್ಟಿಕರ್ತನೆಂದು ಸುಖದುಃಖಗಳಿಗೆ ಕಾರಣಕರ್ತನೆಂದು ಸಕಲವನು ನಡೆಸುವ ಸರ್ವೇಶ್ವರ ನಾನೇ ಎಂದು.</verse>
				<verse number="8">ವರ್ಷಿಸಲಿ ಸದ್ಧರ್ಮವನು ಆಕಾಶಮಂಡಲ ಸುರಿಸಲಿ ಮೇಲಿಂದ ಅದನ್ನು ಆ ಗಗನಮಂಡಲ; ಅಂಕುರಿಸಲಿ ಜೀವೋದ್ಧಾರವನು ಭೂಮಂಡಲ ಬೆಳೆಯಲಿ ಅದರೊಡನೆಯೇ ಸದ್ಧರ್ಮದ ಫಲ, ಸರ್ವೇಶ್ವರನಾದ ನಾನೇ ಕರ್ತ ಇದಕ್ಕೆಲ್ಲಾ.”</verse>
				<verse number="9">ಧಿಕ್ಕಾರ! ತನ್ನನು ರೂಪಿಸಿದವನೊಡನೇ ವ್ಯಾಜ್ಯ ಮಾಡುವವನಿಗೆ; ಅವನು ಕೂಡ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? “ಏನು ಮಾಡುತ್ತಿ” ಎಂದು ಮಣ್ಣು ಕುಂಬಾರನನು ಕೇಳುವುದುಂಟೆ? ‘ನಾನು ನಿನ್ನ ಕೈಯ ಕೃತಿ ಅಲ್ಲ’ ಎಂದು ಆ ಮಡಕೆ ಹೇಳುವುದುಂಟೆ?</verse>
				<verse number="10">‘ನೀನು ಹುಟ್ಟಿಸುವುದೇನು’ ಎಂದು ತಂದೆಯನು ಕೇಳುವವನಿಗೆ ಧಿಕ್ಕಾರ! ‘ನೀನು ಹೆರುವುದೇನು’ ಎಂದು ತಾಯಿಯನು ಕೇಳುವವನಿಗೆ ಧಿಕ್ಕಾರ!</verse>
				<verse number="11">ಸರ್ವೇಶ್ವರ ಇಸ್ರಯೇಲಿನ ಪರಮಪಾವನ ಸ್ವಾಮಿ, ಅದರ ಸೃಷ್ಟಿಕರ್ತ. ಆ ಸರ್ವೇಶ್ವರನ ನುಡಿಯಿದು: “ನನ್ನ ಮಕ್ಕಳ ಬಗ್ಗೆ ನೀ ಕೇಳುವುದೆಂತು? ನನ್ನ ಕೈಯ ಕೃತಿಗಳ ಬಗ್ಗೆ ನೀ ವಿಧಿಸುವುದೆಂತು?</verse>
				<verse number="12">ಜಗವನು, ಅದರಲ್ಲಿನ ಮನುಜರನು ಸೃಜಿಸಿದವನು ನಾನೇ, ಆಕಾಶಮಂಡಲವನು ವಿಶಾಲವಾಗಿ ಹರಡಿದ್ದು ನನ್ನ ಕೈಗಳೇ, ಸೂರ್ಯ, ಚಂದ್ರ, ನಕ್ಷತ್ರಗಳನು ನಿಯಂತ್ರಿಸುವವನು ನಾನೆ.</verse>
				<verse number="13">ಧರ್ಮಸಾಧನೆಗಾಗಿ ಕೋರೆಷನನ್ನು ಉದಯಗೊಳಿಸಿರುವೆನು ಅವನ ಮಾರ್ಗಗಳನ್ನು ನಾನೇ ಸರಾಗಮಾಡುವೆನು ನನ್ನ ನಗರವನು ಪುನರ್ ನಿರ್ಮಾಣಮಾಡುವನು ಅವನು ಸೆರೆಯಾದ ನನ್ನ ಜನರನು ಬಿಡುಗಡೆ ಮಾಡುವನು ಸಂಬಳವನ್ನಾಗಲಿ ಸಂಭಾವನೆಯನ್ನಾಗಲಿ ಸ್ವೀಕರಿಸನು. ಇದ ನುಡಿದಿರುವೆನು ಸೇನಾಧೀಶ್ವರ ಸರ್ವೇಶ್ವರನಾದ ನಾನು.”</verse>
				<verse number="14">ಕೇಳಿರಿ ಸರ್ವೇಶ್ವರನ ಈ ಮಾತನ್ನು: “ನಿಮ್ಮದಾಗುವುದು ಈಜಿಪ್ಟಿನ ಸಿರಿಯು, ಸುಡಾನಿನ ಸಂಪದವು. ನಿಮ್ಮನ್ನು ಸೇರಿ ನಿಮಗಧೀನರಾಗುವರು ಎತ್ತರದ ಸೆಬಾಯರು. ಬೇಡಿತೊಟ್ಟು ಅಡ್ಡಬೀಳುವರು ನಿಮ್ಮ ಮುಂದೆ ಅರಿಕೆಮಾಡಿಕೊಳ್ಳುವರು ಹೀಗೆಂದೆ: ‘ನಿಶ್ಚಯವಾಗಿ ನಿಮ್ಮಲ್ಲಿಹರು ದೇವರು ಅವರಲ್ಲದೆ ದೇವರಿಲ್ಲ ಬೇರೆಯಾರು.’</verse>
				<verse number="15">ಇಸ್ರಯೇಲರ ದೇವರೇ, ಉದ್ಧಾರಕನೇ, ನಿಶ್ಚಯವಾಗಿ ದೇವರಾದ ನೀನು ಮರೆಯಾಗಿರುವೆ.</verse>
				<verse number="16">ಮೂರ್ತಿಗಳನು ಮಾಡುವವರೆಲ್ಲರು ಈಡಾಗುವರು ನಾಚಿಕೆಗೆ ಮಾನಭಂಗಪಟ್ಟು ಒಟ್ಟಿಗೆ ಮುಳುಗುವರವರು ಅವಮಾನದೊಳಗೆ.</verse>
				<verse number="17">ಇಸ್ರಯೇಲಿಗಾದರೋ, ದೊರೆವುದು ಶಾಶ್ವತ ರಕ್ಷಣೆ ಸರ್ವೇಶ್ವರನಿಂದ; ಯುಗಯುಗಾಂತರಕ್ಕೂ ಅದಕ್ಕಾಗದು ಲಜ್ಜೆ, ಮಾನಭಂಗ.”</verse>
				<verse number="18">ಕೇಳಿ, ಆಕಾಶಮಂಡಲವನ್ನು ಸೃಷ್ಟಿಸಿದ ಸರ್ವೇಶ್ವರನ ಮಾತನ್ನು: ಭೂಲೋಕವನ್ನು ನಿರ್ಮಿಸಿ, ರೂಪಿಸಿ, ಸ್ಥಾಪಿಸಿದ ದೇವರು ಆತನು. ಅದನ್ನು ಶೂನ್ಯಸ್ಥಾನವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದವನು ಆತನು. ಅಂಥವನು ಇಂತೆನ್ನುತ್ತಾನೆ: “ಸರ್ವೇಶ್ವರ ನಾನೇ; ನಾನಲ್ಲದೆ ಇನ್ನಾರೂ ಇಲ್ಲ.</verse>
				<verse number="19">ನಾನು ಗುಟ್ಟುಗುಟ್ಟಾಗಿ ಮಾತಾಡಿದವನಲ್ಲ ಕಗ್ಗತ್ತಲೆಯೊಳಗಿನಿಂದ ನುಡಿದವನಲ್ಲ ಶೂನ್ಯದಲ್ಲಿ ನನ್ನ ಹುಡುಕಿರಿ ಎಂದು ಯಕೋಬ ವಂಶಕ್ಕೆ ಹೇಳಿದವನಲ್ಲ. ಸರ್ವೇಶ್ವರನಾದ ನಾನು ಸತ್ಯಾನುಸಾರ ನುಡಿಯುವವನು, ನೆಟ್ಟನೆಯ ಮಾತುಗಳನ್ನೆ ಸ್ಪಷ್ಟವಾಗಿ ಹೇಳುವವನು.”</verse>
				<verse number="20">“ಅಳಿದುಳಿದ ಅನ್ಯಜನರೇ, ನೆರೆದು ಬನ್ನಿ, ಒಟ್ಟಿಗೆ ನನ್ನ ಬಳಿಗೆ ಬನ್ನಿ. ತಮ್ಮ ಮರದ ಬೊಂಬೆಯನು ಹೊತ್ತು ತಿರುಗುವವರು ರಕ್ಷಿಸಲಾಗದ ದೇವತೆಗೆ ಮೊರೆಯಿಡುವ ಬುದ್ಧಿಹೀನರು.</verse>
				<verse number="21">ಹೇಳಿ, ನ್ಯಾಯಸ್ಥಾನಕ್ಕೆ ಬಂದು ನಿಮ್ಮ ವಾದವನ್ನು ಮಂಡಿಸಿ; ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಪರ್ಯಾಲೋಚಿಸಿ ನೋಡಲಿ. ಪ್ರಾರಂಭದಿಂದಲೂ ಈ ವಿಷಯವನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮುಂಚೆಯೇ ತಿಳಿಸಿದವನು ನಾನಲ್ಲದೆ ಇನ್ಯಾರು? ನನ್ನ ಹೊರತು ಇನ್ನು ಯಾವ ದೇವರೂ ಇಲ್ಲ; ನಾನಲ್ಲದೆ ಸತ್ಯಸ್ವರೂಪನು, ಉದ್ಧಾರಕನು ಆದ ದೇವನಿಲ್ಲವೇ ಇಲ್ಲ.</verse>
				<verse number="22">“ಎಲ್ಲೆ ಎಲ್ಲೆಗಳಲ್ಲಿರುವ ಜನರೇ, ತಿರುಗಿಕೊಳ್ಳಿರಿ ನನ್ನ ಕಡೆಗೆ, ಆಗ ಉದ್ಧಾರವಾಗುವಿರಿ. ದೇವರು ಬೇರಾರೂ ಇಲ್ಲ, ನಾನೊಬ್ಬನೆ ಎಂಬುದನರಿಯಿರಿ.</verse>
				<verse number="23">ಪ್ರತಿಯೊಬ್ಬರು ಮೊಣಕಾಲೂರುವರು ನನಗೆ ಎಲ್ಲರು ನಾನೇ ದೇವರೆಂದು ಮಾಡುವರು ಪ್ರತಿಜ್ಞೆ. ಆ ನುಡಿ ಹೊರಟಿದೆ ನನ್ನ ಸತ್ಯದ ಬಾಯಿಂದ ಅದನ್ನು ಹಿಂತೆಗೆಯೆನು ನನ್ನ ಮೇಲಿಟ್ಟ ಆಣೆಯಿಂದ.</verse>
				<verse number="24">“ಜೀವೋದ್ಧಾರವು, ಶಕ್ತಿಯು ಸರ್ವೇಶ್ವರನಲ್ಲಿ ಮಾತ್ರ ಉಂಟು ಆತನ ವಿರೋಧಿಗಳೆಲ್ಲರೂ ಆತನನ್ನೇ ಮರೆಹೋಗುವರು ನಾಚಿಕೆಪಟ್ಟು.</verse>
				<verse number="25">ಪಡೆವರು ಇಸ್ರಯೇಲಿನ ವಂಶಜರೆಲ್ಲರು ಸರ್ವೇಶ್ವರನಲ್ಲೇ ಜೀವೋದ್ಧಾರವನು, ಆನಂದವನು.”</verse>
			</chapter>
			<chapter number="46">
				<verse number="1">ತಗ್ಗಿದೆ ಬೇಲ್ ದೇವತೆ ಕುಗ್ಗಿದೆ ನೆಬೋ ದೇವತೆ ಅವುಗಳ ಪ್ರತಿಮೆಗಳನು ಕತ್ತೆಗಳು ಹೊತ್ತಿವೆ. ನೀವು ಮೆರವಣಿಗೆಯಾಗಿ ಹೊರುತ್ತಿದ್ದ ಆ ಬೊಂಬೆಗಳೆ, ಭಾರವಾದ ಹೊರೆಯಾಗಿವೆ, ಬಳಲಿದಾ ಪಶುಗಳಿಗೆ</verse>
				<verse number="2">ಆ ಬೊಂಬೆಗಳೆಲ್ಲ ಬಗ್ಗಿ ಕುಗ್ಗಿಹೋಗಿವೆ ಭಾರವನ್ನು ನೀಗಿಸಲು ಅವು ನಿಶ್ಯಕ್ತವಾಗಿವೆ ತಾವೆ ಸೆರೆಮನೆ ಸೇರಿಹೋಗಿವೆ.</verse>
				<verse number="3">“ಕಿವಿಗೊಡು, ಓ ಯಕೋಬ ಮನೆತನವೆ, ಅಳಿದುಳಿದಾ ಇಸ್ರಯೇಲಿನ ಮನೆತನವೆ, ಹೊರುತ್ತಿರುವೆ ನಿಮ್ಮನು ಗರ್ಭದಿಂದ ಸಾಕಿ ಸಲಹುತ್ತಿರುವೆ ಹುಟ್ಟಿದಂದಿನಿಂದ.</verse>
				<verse number="4">ನಾನೇ ನಿಮಗೆ ಆಧಾರ ಮುಪ್ಪಿನ ತನಕ ಹೊತ್ತು ಸಲಹುವೆನು ನಿಮ್ಮನು ನರೆಬಂದಾಗ. ಉಂಟುಮಾಡಿದವನು ನಾನೇ, ಹೊರುವವನು ನಾನೇ ಹೌದು, ನಿಮ್ಮನು ಹೊತ್ತು ಸಲಹುವವನು ನಾನೇ.</verse>
				<verse number="5">ನನ್ನನ್ನು ಯಾರಿಗೆ ಸರಿಹೋಲಿಸಬಲ್ಲಿರಿ? ನನ್ನನ್ನು ಯಾರಿಗೆ ಸಾಟಿಮಾಡಬಲ್ಲಿರಿ?</verse>
				<verse number="6">ಸುರಿಯುತ್ತಾರೆ ಜನರು ಚಿನ್ನವನ್ನು ಚೀಲದಿಂದ ತೂಗಿ ತೂಕಹಾಕುತ್ತಾರೆ ಬೆಳ್ಳಿಯನ್ನು ತಕ್ಕಡಿಯಿಂದ. ದೇವರನ್ನು ಮಾಡಿಸುತ್ತಾರೆ ಕೂಲಿಕೊಟ್ಟು ಅಕ್ಕಸಾಲಿಗನಿಂದ ಪೂಜಿಸುತ್ತಾರೆ ಅದನ್ನು ಸಾಷ್ಟಾಂಗ ನಮಸ್ಕಾರದಿಂದ.</verse>
				<verse number="7">ಅದನ್ನು ಮೆರವಣಿಗೆ ಮಾಡುತ್ತಾರೆ ಹೊತ್ತು ಹೆಗಲಮೇಲೆ ಪ್ರತಿಷ್ಠಾಪನೆ ಮಾಡುತ್ತಾರೆ ಇಟ್ಟು ಪೀಠದ ಮೇಲೆ. ಕೂಗಿಕೊಂಡರೂ ಜರುಗದದು ಅಲ್ಲಿಂದ ಉತ್ತರಿಸಿ ಬಿಡಿಸದು ಯಾರನ್ನು ಕಷ್ಟದಿಂದ.</verse>
				<verse number="8">ಮತಭ್ರಷ್ಟರೇ, ಜ್ಞಾಪಕದಲ್ಲಿಡಿ ಇದನ್ನು ಧೈರ್ಯದಿಂದ ಒಪ್ಪಿಕೊಳ್ಳಿ ನಿಮ್ಮ ತಪ್ಪನ್ನು.</verse>
				<verse number="9">ನೆನಪಿಗೆ ತಂದುಕೊಳ್ಳಿ ಪ್ರಾಚೀನ ಘಟನೆಗಳನ್ನು ಅರಿತುಕೊಳ್ಳಿ ನಾನೇ ದೇವರು, ಇನ್ನಾರೂ ಇಲ್ಲ ಎಂಬುದನ್ನು ನಾನೇ ಪರಮದೇವರು, ನನಗೆ ಸರಿಸಮಾನವಿಲ್ಲ ಎಂಬುದನ್ನು.</verse>
				<verse number="10">ಆರಂಭದಲ್ಲಿಯೇ ಅಂತ್ಯವನು ತಿಳಿಸಿದವನು ನಾನು ಭೂತಕಾಲದಲ್ಲಿಯೆ ಭವಿಷ್ಯವನು ಅರುಹಿದವನು ನಾನು. ಸ್ಥಿರವಿರುವುದು ನನ್ನ ಸಂಕಲ್ಪ, ನೆರವೇರುವುದು ನನ್ನ ಇಷ್ಟಾರ್ಥ</verse>
				<verse number="11">ಮೂಡಲಿಂದ ಬೇಟೆಗಾಗಿ ರಣಹದ್ದನು ಕರೆದಂತೆ ಕರೆದಿಹೆನು ದೂರದೇಶದಿಂದ ನನ್ನ ಸಂಕಲ್ಪ ಈಡೇರಿಸಲೆಂದೇ. ನುಡಿದಿರುವೆನು ನಾನು; ಈಡೇರಿಸುವೆನು ಅದನ್ನು ಯೋಜಿಸಿರುವೆನು ನಾನು; ಸಾಧಿಸುವೆನು ಅದನ್ನು.</verse>
				<verse number="12">ಧರ್ಮಕ್ಕೆ ದೂರವಾದ ಹಟಮಾರಿಗಳೇ, ಕಿವಿಗೊಡಿರಿ ನೀವು ನನ್ನ ಮಾತಿಗೆ.</verse>
				<verse number="13">ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”</verse>
			</chapter>
			<chapter number="47">
				<verse number="1">“ಕೆಳಕ್ಕಿಳಿದು ಬಾ, ಯುವತಿಯೇ ಧೂಳಲ್ಲಿ ಕುಳಿತುಕೋ, ಬಾಬೆಲೆ! ಕುವರಿಯೇ, ಕುಕ್ಕರಿಸು ನೆಲದಲಿ ಸಿಂಹಾಸನವಿಲ್ಲ ಇಲ್ಲಿ. ಎಲೈ, ಕಸ್ದೀಯರ ನಗರಿಯೇ, ನೀನಲ್ಲ ಇನ್ನು ಕೋಮಲೆ,, ಸುಕುಮಾರಿ ಎಂದು ಎನಿಸಿಕೊಳ್ಳೆ.</verse>
				<verse number="2">ಬೀಸುವ ಕಲ್ಲನು ಹಿಡಿ, ಹಿಟ್ಟಿಗಾಗಿ ನೆರಿಗೆಯನ್ನು ಹರಿ, ಮುಸುಕನ್ನು ತೆಗೆದುಹಾಕಿ ಹೊಳೆಗಳನ್ನು ಹಾದುಹೋಗು, ನಡೆ ಬರೆಗಾಲಿನಲ್ಲಿ.</verse>
				<verse number="3">ಮುಯ್ಯಿ ತೀರಿಸುವೆನು ಯಾರನ್ನೂ ಕರುಣಿಸದೆ ಬೀದಿಪಾಲಾಗುವೆ ನೀನು ಲಜ್ಜೆಗೆಟ್ಟು, ಮಾನವಿಲ್ಲದೆ.”</verse>
				<verse number="4">ನಮ್ಮ ಉದ್ಧಾರಕನ ನಾಮಧೇಯ ಸೇನಾಧೀಶ್ವರ ಸರ್ವೇಶ್ವರ ಆತನೇ ಇಸ್ರಯೇಲರಿಗೆ ಪರಮಪವಿತ್ರ.</verse>
				<verse number="5">“ಕಸ್ದೀಯ ನಗರಿಯೇ, ಕುಳಿತುಕೊ ಮೌನವಾಗಿ ಕತ್ತಲೆಯೊಳಗೆ ಇನ್ನು ಎನಿಸಿಕೊಳ್ಳೆ ರಾಣಿಯೆಂದು ರಾಜ್ಯಗಳಿಗೆ.”</verse>
				<verse number="6">“ನಾ ರೋಷಗೊಂಡು ನನ್ನ ಜನರನ್ನೇ ನಿನ್ನ ಕೈವಶಮಾಡಿದೆ ನನಗೆ ಸ್ವಂತವಾದವರನ್ನೇ ಈ ಪರಿ ಹೊಲೆಗೆಡಿಸಿದೆ. ನೀನಾದರೋ ಕರುಣೆ ತೋರಿಸದೆಹೋದೆ ಮುದುಕರ ಮೇಲೂ ತೂಕದ ನೊಗವನು ಹೊರಿಸಿದೆ.</verse>
				<verse number="7">ನನ್ನ ಜನರ ಹಿಂಸೆಬಾಧೆಗಳನ್ನು ಗಮನಿಸದೆ ಬರಲಿರುವ ಪರಿಣಾಮವನ್ನು ನೆನೆಸಿಕೊಳ್ಳದೆ ನೀನೇ ಶಾಶ್ವತ ರಾಣಿಯೆಂದು ಮೆರೆದೆ.</verse>
				<verse number="8">ಭೋಗಾಸಕ್ತಳೆ, ನೆಮ್ಮದಿಯಾಗಿ ನೆಲೆಗೊಂಡಿರುವವಳೇ, ‘ಏಕೈಕಳು ನಾನೇ, ನನ್ನ ಹೊರತು ಇನ್ನಾರು ಇಲ್ಲ,’ ಎನ್ನುವವಳೇ, ‘ವಿಧವೆಯಾಗೆನು, ಪುತ್ರಶೋಕ ಎನಗಿರದು’ ಎನ್ನುವವಳೇ, ಇದನು ಕೇಳು:</verse>
				<verse number="9">ಒಂದೇ ದಿನದೊಳಗೆ, ಒಂದೇ ಕ್ಷಣದೊಳಗೆ ಪುತ್ರಶೋಕ, ವೈಧವ್ಯ - ಇವೆರಡು ಒದಗುವುವು ನಿನಗೆ. ಎಷ್ಟೇ ಮಂತ್ರತಂತ್ರಗಳನು ನಡೆಸಿದರೂ ಅನುಭವಿಸುವೆ ನೀ ಪೂರ್ತಿಯಾಗಿ ಇವುಗಳನು.</verse>
				<verse number="10">ಕೇಡನು ನೀ ಮಾಡಿದೆ ಭಯಪಡದೆ ನೋಡರಾರೂ ಎಂದುಕೊಂಡಿದ್ದೆ, ನೀನು ಜ್ಞಾನಿ ವಿವೇಕಿಯೆಂದು ತಿಳಿದುಕೊಂಡೇ ಮರುಳಾದೆ; ‘ಏಕೈಕಳು ನಾನೇ, ಇನ್ನಾರೂ ಇಲ್ಲ’ ಎಂದುಕೊಂಡೆ.</verse>
				<verse number="11">ಇಂತಿರಲು ನಿನಗೊದಗುವುದು ಮಂತ್ರಕ್ಕು ಮೀರಿದ ಆಪತ್ತು ನಿನ್ನ ಮೇಲೆರಗುವುದು ಪರಿಹರಿಸಲಾಗದ ವಿಪತ್ತು ತಟ್ಟನೆ ತಟ್ಟುವುದು ನಿನಗೆ ತಪ್ಪಿಸಲಾಗದ ಕುತ್ತು.</verse>
				<verse number="12">ಪ್ರಯೋಗಿಸಿ ನೋಡು ನಿನ್ನ ಅಗಣಿತ ಮಂತ್ರತಂತ್ರಗಳನು ಬಾಲ್ಯಾರಭ್ಯ ನೀ ಕಲಿತ ಮಾಯಮಾಟಗಳನು ಪ್ರಾಯಶಃ ನಿನಗವು ಪ್ರಯೋಜನವಾದಾವು ಬಹುಶಃ ನಿನಗವು ಭಯಹುಟ್ಟಿಸಿಯಾವು.</verse>
				<verse number="13">ಬೇಸರವಾಯಿತೆ ನಿನಗೆಕೇಳಿ ಮಂತ್ರಾಲೋಚನೆಗಳನು? ಉದ್ಧರಿಸಲಿ ಬರಲಿರುವ ಆ ವಿಪತ್ತುಗಳಿಂದ ನಿನ್ನನು ಖಗೋಳಜ್ಞರು, ಜೋಯಿಸರು ನೋಡಿ ಪಂಚಾಂಗವನು.</verse>
				<verse number="14">ಇರುವರವರೆಲ್ಲರು ಒಣಹುಲ್ಲಿನ ಕೂಳೆಯಂತೆ ಸುಟ್ಟುಬಿಡುವುದವರನು ಉರಿಯುವ ಚಿತೆ ತುತ್ತಾಗುವರವರು ಆ ಜ್ವಾಲಾಗ್ನಿಗೆ ತಪ್ಪದೆ. ಅದು ಚಳಿಗೆ ಮೈಕಾಯಿಸಿಕೊಳ್ಳುವ ಬೆಂಕಿಯಂತಲ್ಲ ಮೈಬೆಚ್ಚಗಾಗಿಸಿಕೊಳ್ಳುವ ಉರಿಯಂತಲ್ಲ.</verse>
				<verse number="15">ಇಂತಾಗುವುದು ನೀ ಗೈದ ಪ್ರಯತ್ನಗಳೆಲ್ಲ. ಬಾಲ್ಯದಿಂದ ನಿನ್ನೊಡನೆ ವ್ಯವಹರಿಸಿದವರು ಸರಿವರು ದೂರಕೆ ಹಿಂದಿರುಗುವರೆಲ್ಲರು ತಂತಮ್ಮ ನಾಡಿಗೆ ಅಂತ್ಯದಲಿ ಯಾರೂ ಆಗರು ರಕ್ಷಣೆ ನಿನಗೆ.”</verse>
			</chapter>
			<chapter number="48">
				<verse number="1">ಇಸ್ರಯೇಲೆಂಬ ನಾಮಧಾರಿಗಳೇ, ಯೆಹೂದ ವಂಶೋತ್ಪನ್ನರೇ, ಯಕೋಬ ಮನೆತನದವರೇ, ಇಡುತ್ತೀರಿ ನೀವು ಸರ್ವೇಶ್ವರನ ಮೇಲೆ ಆಣೆ ಸ್ಮರಿಸುತ್ತೀರಿ ನಿಸ್ಸಂದೇಹವಾಗಿ ಇಸ್ರಯೇಲಿನ ದೇವರನೆ. ಆದರೆ, ದೂರವಾಗಿದೆ ಸತ್ಯಕ್ಕೂ ಧರ್ಮಕ್ಕೂ ನಿಮ್ಮ ಕಾರ್ಯಾಚರಣೆ.</verse>
				<verse number="2">ಹೆಮ್ಮೆಪಡುವರಿವರು ತಾವು ಪವಿತ್ರನಗರದವರೆಂದು ಭರವಸೆಯಿಂದಿರುವರು ದೇವರು ಇಸ್ರಯೇಲಿನವನೇ ಎಂದು ಆತನ ಹೆಸರು ಸೇನಾಧೀಶ್ವರ ಸರ್ವೇಶ್ವರನೇ ಎಂದು.</verse>
				<verse number="3">“ಕೇಳು, ಎಲೈ ಯಕೋಬ ಮನೆತನವೇ, ನಿನಗೆ ತಿಳಿಸಿದೆ ಈವರೆಗೆ ನಡೆದ ಸಂಗತಿಗಳನು ಪೂರ್ವದಲೇ. ಹೌದು ಪ್ರಕಟಿಸಿದೆ ನಾನು, ಹೊರಡಿಸಿದೆ ನನ್ನ ಬಾಯಿಂದಲೇ ಕೈಗೂಡುವಂತೆ ಮಾಡಿದೆ ನಾನವುಗಳನು ಕೂಡಲೆ.</verse>
				<verse number="4">ತಿಳಿದಿದೆ ನನಗೆ ನಿನ್ನ ಹಟಮಾರಿತನ ನಿನ್ನ ಕುತ್ತಿಗೆಯ ನರಗಳು ಕಬ್ಬಿಣ ನಿನ್ನ ಹಣೆ ಕಂಚಿನಂತೆ ಕಠಿಣ.</verse>
				<verse number="5">‘ಈ ಕಾರ್ಯಗಳನ್ನು ನಡೆಸಿದ್ದು ನನ್ನ ವಿಗ್ರಹವೇ ವಿಧಿಸಿದ್ದು ನನ್ನ ಕೆತ್ತನೆಯ ಬೊಂಬೆಯೇ, ಎರಕದ ಮೂರ್ತಿಯೇ’ ಎಂದು ನೀ ಜಂಬ ಕೊಚ್ಚಿಕೊಳ್ಳದಂತೆ ಪುರಾತನ ಕಾಲದಲ್ಲೆ ನಾನಿವುಗಳನು ಮುಂತಿಳಿಸಿದೆ. ಅವುಗಳು ನೆರವೇರುವುದಕ್ಕೆ ಮುಂಚೆಯೇ ಪ್ರಕಟಿಸಿದೆ.</verse>
				<verse number="6">ನೋಡು, ನೀ ಕೇಳಿದವೆಲ್ಲ ನಡೆದಿದೆಯೊ ಇಲ್ಲವೋ ಎಂಬುದನು. ಆದರೂ ಘೋಷಿಸುತ್ತಾರೆಯೇ ನಿನ್ನವರು ಅವುಗಳನ್ನು? ಅರುಹುವೆನು ನಿನಗಿಂದಿನಿಂದ ಹೊಸ ಸಂಗತಿಗಳನು ಈವರೆಗೂ ನೀನರಿಯದ ಗುಪ್ತ ವಿಷಯಗಳನು.</verse>
				<verse number="7">ಪುರಾತನ ಕಾಲದಲ್ಲಿ ಅಲ್ಲ, ಈಗ ನಡೆಯುತ್ತಿವೆ ಈ ಘಟನೆಗಳೆಲ್ಲ. ‘ಇದೆಲ್ಲ ನನಗೆ ಮೊದಲೇ ತಿಳಿದಿತ್ತಲ್ಲಾ,’ ಎಂದು ನೀ ಕೊಚ್ಚಿಕೊಳ್ಳದಂತೆ, ನಾ ನಿನಗೆ ಮುಂತಿಳಿಸಲಿಲ್ಲ.</verse>
				<verse number="8">ಹೌದು, ಹೌದು ನೀ ಕೇಳಿಲ್ಲ, ತಿಳಿದೂ ಇಲ್ಲ ಅದಿಯಿಂದ ನಿನ್ನ ಕಿವಿ ತೆರೆದೂ ಇಲ್ಲ ನೀನು ಆಗರ್ಭ ದ್ರೋಹಿ, ಮಹಾ ಕುಟಿಲ ಎಂಬುದು ನನಗೆ ತಿಳಿದು ಇದೆಯಲ್ಲ!</verse>
				<verse number="9">ಆದರೂ ನನ್ನ ಹೆಸರು ಕೆಡದಂತೆ ತಡೆಹಿಡಿವೆನು ನಿನ್ನ ಮೇಲಣ ಕೋಪವನು; ನನ್ನ ಕೀರ್ತಿಗೆ ಕಳಂಕ ಬಾರದಂತೆ ತಾಳಿಕೊಳ್ಳುವೆನು, ನಿರ್ಮೂಲಮಾಡದೆ ನಿನ್ನನು.</verse>
				<verse number="10">ಬೆಳ್ಳಿಯನು ಪುಟಕ್ಕೆ ಹಾಕಿದಂತಲ್ಲ; ನಿನ್ನನು ಸಂಕಟವೆಂಬ ಕೆಂಡಕ್ಕೆ ಹಾಕಿರುವೆ. ಶೋಧಿಸಿರುವೆನು, ಪರಿಶೋಧಿಸಿರುವೆನು ನಿನ್ನನು ನನಗಾಗೆ;</verse>
				<verse number="11">ಇದನ್ನು ಮಾಡುವೆ ನನಗೋಸ್ಕರವೆ ಇದನ್ನು ಮಾಡುವೆ ಕಳಂಕಬಾರದಂತೆ ನನ್ನ ಹೆಸರಿಗೆ ಸಲ್ಲಗೊಡಿಸೆನು ನನ್ನ ಮಹಿಮೆಯನು ಮತ್ತೊಬ್ಬನಿಗೆ.”</verse>
				<verse number="12">“ಯಕೋಬೆ, ನಾ ಕರೆದ ಇಸ್ರಯೇಲೆ ನನಗೆ ಕಿವಿಗೊಡು, ಪರಮಾತ್ಮ ನಾನೆ ಆದಿಯು ನಾನೆ, ಅಂತ್ಯವು ನಾನೆ.</verse>
				<verse number="13">ಭೂಮಿಗೆ ಅಸ್ತಿವಾರ ಹಾಕಿದ್ದು ನನ್ನ ಕೈಯೇ, ಆಕಾಶವನ್ನು ಹರಡಿದ್ದು ನನ್ನ ಬಲಗೈಯೇ ಇವೆರಡೂ ಬರುತ್ತವೆ ನಾ ಕರೆದ ಮಾತ್ರಕ್ಕೇ.</verse>
				<verse number="14">ಒಟ್ಟುಗೂಡಿ ಕೇಳಿ ನೀವೆಲ್ಲರು ಇದನ್ನು: ಆ ದೇವರುಗಳಲ್ಲಿ ಮುಂತಿಳಿಸಿದವನಾರು ಈ ಸಂಗತಿಯನು? ನನ್ನ ಪ್ರೀತಿಗೆ ಪಾತ್ರನಾದ ವ್ಯಕ್ತಿ ಸೈರಸನು ಕಸ್ದೀಯರ ಮೇಲೆ ಕೈಯೆತ್ತುವನು, ಈಡೇರಿಸುವನು ಬಾಬೆಲಿನಲ್ಲಿ ನನ್ನ ಇಷ್ಟಾರ್ಥವನು.</verse>
				<verse number="15">ಆತನನ್ನು ಹೆಸರಿಸಿ ಕರೆದವನು ನಾನೇ ಆತನನ್ನು ಬರಮಾಡಿದವನೂ ನಾನೇ. ಆತನು ಗಳಿಸುವುದು ಜಯವನ್ನೇ.</verse>
				<verse number="16">ಬಂದು ಕೇಳಿ ಇದನ್ನು ಹತ್ತಿರದಿಂದ ನಾ ಮಾತಾಡಿಲ್ಲ ಗುಟ್ಟಾಗಿ ಆದಿಯಿಂದ ಪ್ರಸನ್ನನಾಗಿಹೆನು ಭುವಿ ಉಂಟಾದಂದಿನಿಂದ.” (ಕಳುಹಿಸಿದ್ದಾರೆ ದೇವರಾದ ಸರ್ವೇಶ್ವರ ನನ್ನನ್ನೀಗ ತಮ್ಮ ಪವಿತ್ರಾತ್ಮರ ಸಮೇತ).</verse>
				<verse number="17">ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರ ಸ್ವಾಮಿಯೆ ನುಡಿದಿಹನು: “ನಿನಗೆ ಕ್ಷೇಮ‍ಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರ ಸ್ವಾಮಿ ದೇವರು ನಾನು.</verse>
				<verse number="18">ಎಷ್ಟೋ ಚೆನ್ನಾಗಿರುತ್ತಿತ್ತು ನೀ ನನ್ನ ಆಜ್ಞೆಗಳನ್ನು ಪಾಲಿಸಿದ್ದರೆ ಇರುತ್ತಿತ್ತು ನಿನಗೆ ಸುಖಶಾಂತಿ ಮಹಾನದಿಯಂತೆ ನಿನ್ನ ಸತ್ಯಸಂಧತೆ ಸಮುದ್ರ ಅಲೆಗಳಂತೆ.</verse>
				<verse number="19">ಅಗಣಿತವಾಗಿರುತ್ತಿತ್ತು ನಿನ್ನ ಸಂತತಿ ಕಡಲ ಮರಳಿನಂತೆ, ನಿನ್ನ ಕರುಳಿನ ಕುಡಿಗಳು ಉಸುಬಿನ ಅಣುರೇಣುಗಳಂತೆ, ಅವರ ಹೆಸರುಗಳು ಕೆಟ್ಟು ಅಳಿದುಹೋಗುತ್ತಿರಲಿಲ್ಲ ನನ್ನ ಮುಂದೆ.”</verse>
				<verse number="20">ಹೊರಡಿರಿ ಬಾಬಿಲೋನ್ ನಗರದಿಂದ, ಓಡಿರಿ ಕಸ್ದೀಯರ ಕಡೆಯಿಂದ ಪ್ರಚುರಪಡಿಸಿರಿ ಹರ್ಷಧ್ವನಿಯಿಂದ, ಪ್ರಕಟಿಸಿರಿ ಭೂಮಿಯ ಕಟ್ಟಕಡೆಯ ತನಕ, ಈ ಪರಿ ತಿಳಿಸಿರಿ: “ಸರ್ವೇಶ್ವರ, ತಮ್ಮ ದಾಸ ಯಕೋಬನ ಉದ್ಧಾರಕ\.</verse>
				<verse number="21">ಆತ ಮರುಭೂಮಿಯಲ್ಲಿ ತನ್ನ ಜನರನ್ನು ನಡೆಸಿದಾಗ ಬಳಲಲಿಲ್ಲ ಅವರು ಬಾಯಾರಿಕೆಯಿಂದ; ಹರಿಸಿದನು ನೀರನ್ನು ಅವರಿಗಾಗಿ ಕಲ್ಲಿನೊಳಗಿಂದ ಜಲವಾಹಿನಿ ಹರಿಯಿತು ಆತ ಸೀಳಿದ ಬಂಡೆಯಿಂದ.</verse>
				<verse number="22">“ದುಷ್ಟರಿಗಿಲ್ಲ ಶಾಂತಿಸಮಾಧಾನ” ಇದು ಸರ್ವೇಶ್ವರ ಸ್ವಾಮಿಯ ವಚನ.</verse>
			</chapter>
			<chapter number="49">
				<verse number="1">ಕಿವಿಗೊಡಿ ನನ್ನ ದ್ವೀಪನಿವಾಸಿಗಳೇ, ಆಲಿಸಿ ನನ್ನನ್ನು ದೂರದ ಜನಾಂಗಗಳೇ, ಸರ್ವೇಶ್ವರ ಕರೆದನೆನ್ನನ್ನು ಗರ್ಭದಲ್ಲಿದ್ದಾಗಲೇ; ಹೆಸರಿಟ್ಟನೆನಗೆ ನಾನು ತಾಯಿಯ ಉದರದಲ್ಲಿದ್ದಾಗಲೇ.</verse>
				<verse number="2">ಮಾಡಿದನು ನನ್ನ ನುಡಿಯನ್ನು ಹರಿತವಾದ ಖಡ್ಗವನ್ನಾಗಿ ಮುಚ್ಚಿಟ್ಟಹನು ನನ್ನನ್ನು ತನ್ನ ಕರದ ನೆರಳಿನಲ್ಲಿ ರೂಪಿಸಿಹನು ನನ್ನನ್ನು ಚೂಪಾದ ಬಾಣವನ್ನಾಗಿ, ಬಚ್ಚಿಟ್ಟಿಹನು ನನ್ನನು ತನ್ನ ಬತ್ತಳಿಕೆಯಲ್ಲಿ.</verse>
				<verse number="3">ಆತನೆನಗೆ ಇಂತೆಂದ: “ನೀನೆನ್ನ ದಾಸ; ನನ್ನ ಮಹಿಮೆ ಬೆಳಗಿಸುವ ಇಸ್ರಯೇಲ.”</verse>
				<verse number="4">ಇಂತೆಂದುಕೊಂಡೆ ನಾನಾಗ: ವ್ಯರ್ಥವಾಯಿತು ನನ್ನ ಸಾಮರ್ಥ್ಯವೆಲ್ಲ ಶೂನ್ಯವಾಗಿ ಹೋಯಿತು ನನ್ನ ಶಕ್ತಿಯೆಲ್ಲ ನನಗೆ ದೊರಕುವುದು ನ್ಯಾಯ ಸರ್ವೇಶ್ವರನ ಕೈಯಲ್ಲೇ, ನನಗೆ ಬರುವುದು ಬಹುಮಾನ ಆ ದೇವರಿಂದಲೇ.</verse>
				<verse number="5">ಯಕೋಬ್ಯರನ್ನು ತನ್ನ ಬಳಿಗೆ ಕರೆತರಲು ಇಸ್ರಯೇಲರನ್ನು ತನ್ನೊಂದಿಗೆ ಸೇರಿಸಿಕೊಳ್ಳಲು ತನ್ನ ದಾಸನನ್ನಾಗಿ ನನ್ನ ರೂಪಿಸಿದನು, ತಾಯ ಗರ್ಭದಲ್ಲಿದ್ದಾಗಲೇ ಮಾಡಿದನಿದನು. ಸನ್ಮಾನ್ಯನು ನಾನು ಸರ್ವೇಶ್ವರನ ದೃಷ್ಟಿಯಲಿ ನನ್ನ ಶಕ್ತಿಸಾಮರ್ಥ್ಯ ಇರುವುದು ಆ ದೇವರಲಿ.</verse>
				<verse number="6">ಮತ್ತೆ ಆತ ಇಂತೆಂದನು ನನಗೆ: “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”</verse>
				<verse number="7">ಪೂರ್ತಿಯಾಗಿ ತಿರಸ್ಕೃತನಾದವನಿಗೆ ಅನ್ಯಜನಾಂಗಗಳಿಗೆ ಅಸಹ್ಯವಾದವನಿಗೆ ದರ್ಪಾಧಿಪತಿಗಳಿಗೆ ದಾಸನಾದವನಿಗೆ, ಇಸ್ರಯೇಲಿನ ವಿಮೋಚಕನು ಹಾಗೂ ಪರಮಪಾವನನು ಆದ ಸರ್ವೇಶ್ವರನು ಹೀಗೆಂದು ಹೇಳುವನು: “ಸರ್ವೇಶ್ವರ ಸ್ವಾಮಿಯ ಪ್ರಾಮಾಣಿಕತೆಯನ್ನೂ ಇಸ್ರಯೇಲಿನ ಪರಮ ಪಾವನನಿಂದ ನೀನು ಆಯ್ಕೆಯಾದುದನ್ನೂ ನಿನ್ನ ಅರಸರುಗಳು ಕಂಡು, ಎದ್ದುನಿಲ್ಲುವರು ನಿನಗೆ ಅಧಿಪತಿಗಳು ಅಡ್ಡಬೀಳುವರು.”</verse>
				<verse number="8">ತಮ್ಮ ಪ್ರಜೆಗೆ ಇಂತೆನ್ನುತ್ತಾರೆ ಸರ್ವೇಶ್ವರ ಸ್ವಾಮಿ: “ನಿನಗೆ ದಯಪಾಲಿಸುವೆನು ಸದುತ್ತರವನು ಪ್ರಸನ್ನತೆಯ ಕಾಲದಲಿ ಸಹಾಯ ನೀಡುವೆನು ರಕ್ಷಣೆಯ ದಿನದಲಿ ನಿನ್ನನು ಕಾಪಾಡಿ ನೇಮಿಸುವೆನು ಜನತೆಗೆ ಸ್ಥಿರ ಒಡಂಬಡಿಕೆಯಾಗಿ.</verse>
				<verse number="9">‘ಹೊರಟುಹೋಗಿರಿ’ ಎನ್ನುವೆನು ಸೆರೆಯಾಳುಗಳಿಗೆ ‘ಬೆಳಕಿಗೆ ಬನ್ನಿರಿ’ ಎನ್ನುವೆನು ಕತ್ತಲಲ್ಲಿರುವವರಿಗೆ ಪಾಳುಬಿದ್ದ ಸೊತ್ತುಗಳನ್ನು ಹಂಚಿಕೊಡುವೆನು ಅವರಿಗೆ. ದೇಶವನ್ನು ಪುನಃ ತರುವೆನು ಪೂರ್ವಸ್ಥಿತಿಗೆ ದಾರಿಯುದ್ದಕ್ಕೂ ಆಹಾರ ಒದಗಿಸುವೆನು ನನ್ನ ಪ್ರಜೆಗೆ ಬೋಳು ಬೆಟ್ಟಗಳೆಲ್ಲ ಹುಲ್ಲುಗಾವಲುಗಳಾಗುವುವು ನನ್ನಾ ಮಂದೆಗೆ.</verse>
				<verse number="10">ಇರದು ಅವರಿಗೆ ಹಸಿವು ಬಾಯಾರಿಕೆ ಬಡಿಯವು ಅವರಿಗೆ ಬಿಸಿಲುಬೇಗೆ. ನಡೆಸುವೆನು ನೀರುಕ್ಕುವ ಚಿಲುಮೆಗಳ ಬಳಿಗೆ ಕರುಣಾಕರನು ದಾರಿತೋರಿಸುವನು ಅವರಿಗೆ.</verse>
				<verse number="11">ಸಮದಾರಿಯಾಗಿಸುವೆನು ನನ್ನ ಬೆಟ್ಟಗುಡ್ಡಗಳನು ಎತ್ತರಿಸುವೆನು ನನ್ನ ರಾಜಮಾರ್ಗಗಳನು.</verse>
				<verse number="12">ನೋಡಿ, ಬರುತಿಹರು ನನ್ನ ಜನರು ದೂರದಿಂದ ಹೌದು, ಬರುತಿಹರು ಉತ್ತರ ಪಶ್ಚಿಮದಿಂದ ದಕ್ಷಿಣದ ಆ ಅಶ್ವಾನ್ ನಾಡಿನಿಂದ.</verse>
				<verse number="13">ಹರ್ಷಧ್ವನಿಗೈ ಆಕಾಶವೇ ಉಲ್ಲಾಸಪಡು ಪೊಡವಿಯೇ ತಟ್ಟಾಡಿರಿ ಬೆಟ್ಟಗುಡ್ಡಗಳೇ ಏಕೆನೆ ಸಂತೈಸಿಹನು ಸರ್ವೇಶ್ವರ ತನ್ನ ಪ್ರಜೆಯನು ಕನಿಕರಿಸಿಹನು ಶೋಷಿತರಾದ ತನ್ನ ಜನರನು.</verse>
				<verse number="14">ಜೆರುಸಲೇಮಿನ ಜನರಾದರೋ ಇಂತೆಂದರು: ಸರ್ವೇಶ್ವರ ನಮ್ಮನ್ನು ಕೈಬಿಟ್ಟಿಹನು, ಆ ಸ್ವಾಮಿ ನಮ್ಮನ್ನು ಮರೆತುಬಿಟ್ಟಿಹನು.”</verse>
				<verse number="15">ಹೆತ್ತ ತಾಯಿಗೆ ತನ್ನ ಕಂದನ ಪ್ರೀತಿ ಬತ್ತಿಹೋಗುವುದುಂಟೆ? ಆಕೆ ತನ್ನ ಮೊಲೆಗೂಸನು ಮರೆತುಬಿಡುವುದುಂಟೆ? ಒಂದು ವೇಳೆ ಆಕೆ ಮರೆತರೂ ನಾ ನಿನ್ನನು ಮರೆಯೆ.</verse>
				<verse number="16">ನೋಡು, ನಿನ್ನ ಚಿತ್ರ ಕೊರೆದಿದೆ ನನ್ನ ಅಂಗೈಗಳಲೆ ನಿನ್ನ ಪೌಳಿಗೋಡೆಗಳು ಇವೆ ಸದಾ ನನ್ನ ಕಣ್ಣೆದುರಿನಲೆ.</verse>
				<verse number="17">ನಿನ್ನ ಮರಳಿ ಕಟ್ಟುವವರು ಬರುತಿಹರು ತ್ವರೆಯಿಂದ ನಿನ್ನ ಕೆಡವಿ ಹಾಳುಮಾಡಿದವರು ಹೊರಡುತಿಹರು ನಿನ್ನಿಂದ.</verse>
				<verse number="18">ಕಣ್ಣೆತ್ತಿ ಸುತ್ತಮುತ್ತಲು ನೋಡು: ಬರುತಿಹರು ನಿನ್ನ ಬಳಿಗೆ ಅವರೆಲ್ಲರು ಕೂಡಿಕೊಂಡು. ನನ್ನ ಜೀವದಾಣೆ ನಿನಗೆ ಹೇಳುವುದೇನೆಂದರೆ: ‘ವಧುವು ಒಡವೆಗಳನು ಧರಿಸಿಕೊಳ್ಳುವಂತೆ ಅವರಾಗುವರು ನಿನಗೆ ಆಭರಣಗಳಂತೆ.’</verse>
				<verse number="19">ಪಾಳುಬಿದ್ದ ನಿನ್ನ ಪ್ರದೇಶಗಳು ಬೀಳುಬಿದ್ದ ನಿನ್ನ ಭೂಮಿಗಳು ಕೆಡವಿಬಿದ್ದ ನಿನ್ನ ಬೀಡುಗಳು ಕಿಕ್ಕಿರಿದಾಗುವುವು ನಿನ್ನ ನಿವಾಸಿಗಳಿಗೆ; ನಿನ್ನ ಕಬಳಿಸಿದವರು ದೂರವಾಗುವರು ನಿನಗೆ.</verse>
				<verse number="20">“ಸರಿದುಕೊ, ನಮಗೆ ಸ್ಥಳಾವಕಾಶ ಸಾಲದು” ಎಂದು ಪೇಳ್ವರು ನಿನ್ನ ಕಿವಿಯೊಳು ಮಕ್ಕಳು ನೀ ಪರದೇಶಿಯಾಗಿದ್ದಾಗ ನಿನಗೆ ಹುಟ್ಟಿದಾ ಮಕ್ಕಳು.</verse>
				<verse number="21">ಆಗ ನೀನು ಹೀಗೆಂದುಕೊಳ್ಳುವೆ ಮನದೊಳು: “ನಾನೋ ಮಕ್ಕಳನು ಕಳೆದುಕೊಂಡವಳು, ಪುತ್ರಹೀನಳು, ದೇಶಭ್ರಷ್ಟಳು, ತಿರುಕಳು. ಇಷ್ಟೊಂದು ಮಕ್ಕಳನು ಕೊಟ್ಟವರಾರು ನನಗೆ? ಇವರನ್ನು ಪೋಷಿಸಿದವರಾರು ಹೀಗೆ? ಇವರೆಲ್ಲಿದ್ದರು? ನಾನೋ ಒಬ್ಬಂಟಿಗಳಾಗಿದ್ದೆ!”</verse>
				<verse number="22">ಇಂತೆನ್ನುವರು ಸ್ವಾಮಿ ಸರ್ವೇಶ್ವರ: ಇದೋ, ಕೈಸನ್ನೆಮಾಡುವೆ ಜನಾಂಗಗಳಿಗೆ ನನ್ನ ಧ್ವಜವನ್ನೆತ್ತುವೆ ದೇಶಾಂತರಗಳವರೆಗೆ ಬರುವರವರು ನಿನ್ನ ಕುವರರನು ಅಪ್ಪಿಕೊಂಡು ಎದೆಗೆ ಕರೆತರುವರು ನಿನ್ನ ಕುವರಿಯರನು ಹೆಗಲಮೇಲೆ.</verse>
				<verse number="23">ಸಾಕುತಂದೆಗಳಾಗುವರು ರಾಜರು ನಿನಗೆ ಸಾಕುತಾಯಿಯರಾಗುವರು ರಾಣಿಯರು ನಿನಗೆ. ನಿನ್ನ ಪಾದಧೂಳಿಯ ನೆಕ್ಕುವರವರು ಸಾಷ್ಟಾಂಗವೆರಗಿ ನನಗೆ. ಆಗ ನಿನಗೆ ಗೊತ್ತಾಗುವುದು ನಾನೇ ಸರ್ವೇಶ್ವರನೆಂದು ನನ್ನನ್ನು ನಿರೀಕ್ಷಿಸುವವರು ಆಶಾಭಂಗಪಡರೆಂದು.</verse>
				<verse number="24">ಬಲಾಢ್ಯನಿಂದ ಕೊಳ್ಳೆಯನ್ನು ಕಸಿದುಕೊಳ್ಳಲಾದೀತೆ? ಭೀಕರನಿಗೆ ಸೆರೆಯಾದವರನ್ನು ಬಿಡಿಸಲಾದೀತೆ?</verse>
				<verse number="25">ಸರ್ವೇಶ್ವರ ಹೀಗೆನ್ನುತ್ತಾರೆ: “ಹೌದು, ಅಪಹರಿಸಲಾಗುವುದು ಬಲಾಢ್ಯನ ಸೆರೆಯಾಳುಗಳನು ಕಸಿದುಕೊಳ್ಳಲಾಗುವುದು ಭೀಕರನ ಕೊಳ್ಳೆಯನು. ನಿನ್ನೊಡನೆ ಹೋರಾಡುವವನ ಸಂಗಡ ಹೊರಾಡುವೆ ನಾನೇ. ಅಷ್ಟೇ ಅಲ್ಲ, ನಿನ್ನ ಮಕ್ಕಳನು ಉದ್ಧರಿಸುವೆ ನಾನೇ.</verse>
				<verse number="26">ಮಾಡುವೆನು ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಅಮಲೇರುವರು ಸ್ವಂತ ರಕ್ತವನ್ನು ಕುಡಿದು ದ್ರಾಕ್ಷಾರಸದಂತೆ. ಅರಿವರು ನರಮಾನವರೆಲ್ಲರು ಇಂತು: ನಾನೇ ಸರ್ವೇಶ್ವರ, ನಿನ್ನ ರಕ್ಷಕ, ನಿನ್ನ ನಿನ್ನ ವಿಮೋಚಕನೆಂದು; ನಾನೇ ಯಕೋಬ ವಂಶದ ಬಲಾಢ್ಯ ದೇವನೆಂದು.</verse>
			</chapter>
			<chapter number="50">
				<verse number="1">ಸರ್ವೇಶ್ವರ ಹೀಗೆನ್ನುತ್ತಾರೆ: “ವಿವಾಹ ವಿಚ್ಛೇದನಗೈದ ಗಂಡಸಿನಂತೆ ನಾನು ನಿಮ್ಮ ಜನಾಂಗವನ್ನು ಪರಿತ್ಯಜಿಸಿದುಂಟೊ? ತನ್ನ ಮಕ್ಕಳನ್ನು ಜೀತಕ್ಕೆ ಇರಿಸುವವನಂತೆ ನಾನು ನಿಮ್ಮನ್ನು ನನ್ನ ಸಾಲಗಾರರಿಗೆ ಮಾರಿದುಂಟೊ? ಇಲ್ಲ, ನೀವು ಸೆರೆವಾಸಿಗಳಾದಿರಿ ನಿಮ್ಮ ದೋಷಗಳ ನಿಮಿತ್ತ; ನಿಮ್ಮ ತಾಯಿಯನು ಬಿಡಲಾಯಿತು ನಿಮ್ಮ ದ್ರೋಹಗಳ ನಿಮಿತ್ತ.</verse>
				<verse number="2">ನಾನು ರಕ್ಷಿಸಲು ಬಂದಾಗ ಯಾರೂ ಕಾದಿರಲಿಲ್ಲ, ಏಕೆ? ನಾನು ಕೂಗಿಕರೆದಾಗ ಯಾರೂ ಉತ್ತರಕೊಡಲಿಲ್ಲ, ಏಕೆ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿ ನನ್ನಲ್ಲಿ ಇಲ್ಲವೋ? ಬರಿ ಗರ್ಜನೆಯಿಂದ ಬತ್ತಿಸಬಲ್ಲೆ ಸಮುದ್ರವನು ಬೆಂಗಾಡಾಗಿಸಬಲ್ಲೆ ನಾ ನದಿಸರೋವರಗಳನು ಬಾಯಾರಿ ಸತ್ತು ನಾರುವಂತೆ ಮಾಡಬಲ್ಲೆ ಅಲ್ಲಿಯ ಮೀನುಗಳನು.</verse>
				<verse number="3">ಹೊದಿಸುವೆನು ಆಕಾಶಕ್ಕೆ ಅಂಧಕಾರವನು ಹಾಕಿಸುವೆನು ಅದಕ್ಕೆ ಗೋಣಿತಟ್ಟಿನ ಮುಸುಕನು.</verse>
				<verse number="4">ದಣಿದವರನ್ನು ಹಿತನುಡಿಗಳಿಂದ ತಣಿಸುವಂತೆ ಅನುಗ್ರಹಿಸುತ್ತಾನೆನಗೆ ಸ್ವಾಮಿ ಸರ್ವೇಶ್ವರ ಶಿಕ್ಷಿತರ ನಾಲಗೆಯನು; ಶಿಷ್ಯನೋಪಾದಿ ನಾನು ಆತನನ್ನು ಆಲಿಸುವಂತೆ ಬೆಳಬೆಳಗೂ ನನ್ನನೆಚ್ಚರಿಸಿ ಚೇತನಗೊಳಿಸುತ್ತಾನೆ ನನ್ನ ಕಿವಿಯನು.</verse>
				<verse number="5">ತೆರೆದಿಹನು ಸ್ವಾಮಿ ಸರ್ವೇಶ್ವರ ನನ್ನ ಕಿವಿಯನು ಎಂದೇ ವಿಮುಖನಾಗಲಿಲ್ಲ ನಾನು, ಪ್ರತಿಭಟಿಸಲಿಲ್ಲ ಆತನನು.</verse>
				<verse number="6">ಬೆನ್ನುಕೊಟ್ಟೆನು ಹೊಡೆಯುವವರಿಗೆ ಗಡ್ಡ ಒಡ್ಡಿದೆನು ಅದನ್ನು ಕೀಳುವವರಿಗೆ ಮುಖ ಮರೆಮಾಡಲಿಲ್ಲ ಉಗುಳುಬುಗುಳಿಗೆ.</verse>
				<verse number="7">ನೆರವಾಗಿಹನು ನನಗೆ ಸ್ವಾಮಿ ಸರ್ವೇಶ್ವರ ಎಂದೇ ತಲೆತಗ್ಗಿಸಲಿಲ್ಲ ನಾನು ನಾಚಿಕೆಯಿಂದ ಗಟ್ಟಿಮಾಡಿಕೊಂಡೆ ಮುಖವನು ಕಗ್ಗಲ್ಲಿನ ಹಾಗೆ ಆಶಾಭಂಗಪಡಲಾರೆನೆಂದು ಗೊತ್ತು ನನಗೆ.</verse>
				<verse number="8">ನನ್ನ ಪರ ತೀರ್ಪುಕೊಡುವವನು ಇಹನು ಹತ್ತಿರದಲೆ ನನಗೆ ಪ್ರತಿಕಕ್ಷಿ ಯಾರೆ ಬರಲಿ ಮುಂದಕೆ. ನನ್ನೊಡನೆ ವ್ಯಾಜ್ಯಮಾಡಬಲ್ಲವನಾರೇ ನಿಲ್ಲಲಿ ನ್ಯಾಯಕೆ.</verse>
				<verse number="9">ಇಗೋ, ಸ್ವಾಮಿ ಸರ್ವೇಶ್ವರ ನಿಂತಿಹರು ನನಗೆ ನೆರವಾಗಿ ನಿರ್ಣಯಿಸುವವನು ಯಾರು ನನ್ನನ್ನು ಅಪರಾಧಿಯಾಗಿ? ನುಸಿತಿಂದ ವಸ್ತ್ರದಂತೆ ಅಳಿದುಹೋಗುವರವರು ಜೀರ್ಣವಾಗಿ.</verse>
				<verse number="10">ಸರ್ವೇಶ್ವರನ ದಾಸನಾದ ನನ್ನ ಮಾತುಗಳನು ಕೇಳಿ: ಭಯಭಕ್ತಿಯುಳ್ಳವನಾರು ನಿಮ್ಮೊಳು ಆ ಸರ್ವೇಶ್ವರನಲಿ? ಬೆಳಕಿಲ್ಲದೆ ಕತ್ತಲಲಿ ನಡೆಯುವವನು ಭರವಸೆಯಿಡಲಿ ಆ ಸರ್ವೇಶ್ವರನ ನಾಮದಲಿ; ಆಶ್ರಯ ಪಡೆಯಲಿ ತನ್ನಾ ದೇವನಲಿ.</verse>
				<verse number="11">ಬೆಂಕಿಯಿಕ್ಕಿ ಸುತ್ತಲು ಕೊಳ್ಳಿಗಳನು ಹತ್ತಿಸಿಕೊಂಡಿರುವ ಎಲೈ ಜನರೇ, ನಡೆಯಿರಿ ನಿಮ್ಮಾ ಬೆಂಕಿಯ ಬೆಳಕಿನಲಿ ನೀವು ಹತ್ತಿಸಿದ ಆ ಕೊಳ್ಳಿಗಳ ನಡುವೆಯೆ ನಡೆಯಿರಿ: ಇಗೋ, ಒದಗುವುದು ದುರ್ಗತಿ ನನ್ನ ಹಸ್ತದಿಂದ, ಸಾಯುವಿರಿ ನೀವು ಬಾಧೆಯಿಂದ.</verse>
			</chapter>
			<chapter number="51">
				<verse number="1">“ಸದ್ಧರ್ಮಾರ್ಥಿಗಳಾದ ಸರ್ವೇಶ್ವರನ ಶರಣರೇ ಕೇಳಿ: ನೀವು ಯಾವ ಬಂಡೆಗಲ್ಲಿನಿಂದ ರೂಪುಪಡೆದಿರಿ, ಯಾವ ಕಲ್ಲುಗುಂಡಿಯಿಂದ ಅಗೆಯಲ್ಪಟ್ಟಿರಿ, ಎಂಬುದನ್ನು ಪರಿಭಾವಿಸಿ ನೋಡಿರಿ.</verse>
				<verse number="2">ನೆನೆಯಿರಿ ನಿಮ್ಮ ಮೂಲಪುರುಷ ಅಬ್ರಹಾಮನನು ಅವನ ಸತಿ ಸಾರಳನು. ಅಬ್ರಹಾಮನನ್ನು ನಾ ಕರೆದಾಗ ಆತನು ಒಬ್ಬಂಟಿಗನು ಆಶೀರ್ವಾದದಿ ನಾ ಬೆಳೆಸಿದೆ ಆತನ ಸಂತಾನವನು.</verse>
				<verse number="3">ಸರ್ವೇಶ್ವರನಾದ ನಾನು ಸಂತೈಸದೆ ಬಿಡೆನು ಸಿಯೋನನ್ನು, ಉದ್ಧರಿಸುವೆನು ಆ ಹಾಳುಬಿದ್ದ ಸ್ಥಳಗಳೆಲ್ಲವನು. ಮಾರ್ಪಡಿಸುವೆನು ಕಾಡುನೆಲವನು ಏದೆನ್ ಉದ್ಯಾನದಂತೆ ಮರುಭೂಮಿಯನು, ದೇವತೆಗಳ ಉದ್ಯಾನವಾಗುವಂತೆ ಹರ್ಷೋಲ್ಲಾಸ, ಸ್ತುತಿಸ್ತೋತ್ರ, ಮಧುರಗಾನ ಅಲ್ಲಿ ನೆಲೆಸುವಂತೆ.</verse>
				<verse number="4">ಆಲಿಸಿರಿ ನನ್ನ ಜನರೆ, ಕಿವಿಗೊಡಿ ನನ್ನ ಪ್ರಜೆಗಳೆ: ಧರ್ಮೋಪದೇಶ ಹೊರಡುವುದು ರಾಷ್ಟ್ರಗಳಿಗೆ ನನ್ನಿಂದಲೆ; ಬೆಳಗುವುದು ಜಗಜ್ಯೋತಿಯಾಗಿ ನನ್ನ ನ್ಯಾಯಬೋಧೆ.</verse>
				<verse number="5">ಹತ್ತಿರದಲ್ಲೇ ಇದೆ ನಾ ನೀಡುವ ಮುಕ್ತಿ ಸಿಗುವದು ನನ್ನಿಂದ ವಿಮೋಚನಾ ಶಕ್ತಿ ನ್ಯಾಯ ನೀಡುವೆನು ರಾಷ್ಟ್ರಗಳಿಗೆ ನನ್ನ ಭುಜಬಲದಿಂದ ನನ್ನನ್ನು ನಿರೀಕ್ಷಿಸಿಕೊಂಡಿರುವರು ಜನರು ದೂರದೇಶಗಳಿಂದ ಕಾದಿರುವರು ಆ ಭುಜಬಲ ಸಾಧನೆಗಾಗಿ ನಂಬಿಕೆಯಿಂದ.</verse>
				<verse number="6">ಆಕಾಶಮಂಡಲವನು ನೋಡಿ ಕಣ್ಣೆತ್ತಿ ಭೂಮಂಡಲದತ್ತ ನೋಡಿ ಕೆಳಗೆ ದಿಟ್ಟಿಸಿ. ಆಕಾಶ ಚದರಿಹೋಗುವುದು ಹೊಗೆಯಂತೆ ಭೂಮಿ ಹರಿದುಹೋಗುವುದು ಬಟ್ಟೆಯಂತೆ ಸಾಯುವರು ಭೂನಿವಾಸಿಗಳು ಅದರಂತೆ. ನಾ ಕೊಡುವ ವಿಮೋಚನೆಯೋ ನಿಲ್ಲುವುದು ಶಾಶ್ವತವಾಗಿ ನಾ ನೀಡುವ ಮುಕ್ತಿಯೋ ಅಳಿದುಹೋಗದು ಭಂಗವಾಗಿ.</verse>
				<verse number="7">“ಕಿವಿಗೊಟ್ಟು ಕೇಳಿರಿ ಸದ್ಧರ್ಮದ ಸುಜ್ಞಾನಿಗಳೇ, ನನ್ನ ಬೋಧೆಯಲ್ಲಿ ಶ್ರದ್ಧೆಯಿಡುವವರೇ, ಹೆದರಬೇಡಿ ಮನುಜರಾಡುವ ದೂರಿಗೆ ಅಂಜದಿರಿ ಅವರ ನಿಂದೆದೂಷಣೆಗೆ.</verse>
				<verse number="8">ನುಸಿ ಅವರನ್ನು ತಿಂದುಹಾಕುವುದು ಬಟ್ಟೆಯಂತೆ ಹುಳು ಅವರನ್ನು ಮೆದ್ದುಬಿಡುವುದು ಉಣ್ಣೆಯಂತೆ. ನಾ ನೀಡುವ ಮುಕ್ತಿಯೋ ನಿಲ್ಲುವುದು ಶಾಶ್ವತವಾಗಿ ನಾ ಕೊಡುವ ವಿಮೋಚನೆ ಸದಾ ಇರುವುದು ನೆಲೆಯಾಗಿ.”</verse>
				<verse number="9">ಎಚ್ಚರಗೊಳ್ಳು ಸರ್ವೇಶ್ವರನ ಭುಜವೇ, ಎಚ್ಚರಗೊಂಡು ಬಲವನು ತಂದುಕೊ ಭುಜವೇ, ಪೂರ್ವಕಾಲದೊಳು ಪುರಾತನ ಪೀಳಿಗೆಯೊಳು ಎಚ್ಚರಗೊಂಡಂತೆ ಎಚ್ಚೆತ್ತುಕೊ ಈಗಲು. ರಹಬನ್ನು ಛೇದಿಸಿಬಿಟ್ಟ ಭುಜ ನೀನಲ್ಲವೆ? ಘಟಸರ್ಪವನು ಅಪ್ಪಳಿಸಿದ ಭುಜ ನೀನಲ್ಲವೆ?</verse>
				<verse number="10">ಸಮುದ್ರ ಜನರಾಶಿಗಳನು ಬತ್ತಿಸಿದ ಬಾಹು ನೀನು ವಿಮುಕ್ತ ಜನ ಹಾಯುವಂತೆ ಸಮುದ್ರದಲಿ ದಾರಿಮಾಡಿದೆ ನೀನು.</verse>
				<verse number="11">ಹಿಂದಿರುಗುವರು ಸರ್ವೇಶ್ವರನಿಂದ ರಕ್ಷಣೆ ಪಡೆದವರು ಉತ್ಸಾಹ ಗೀತೆಯೊಂದಿಗೆ ಸಿಯೋನನ್ನು ಸೇರುವರವರು. ಧರಿಸಿಕೊಳ್ಳುವರು ಶಾಶ್ವತ ಸಂತಸವೆಂಬ ಕಿರೀಟವನು ಅನುಭವಿಸುವರು ಹರ್ಷಾನಂದಗಳನು ತೊಲಗಿ ಓಡುವುವು ದುಃಖದುಗುಡಗಳು.</verse>
				<verse number="12">“ನಾನೆ, ನಾನೆ ನಿನ್ನನು ಸಂತೈಸುವವನಾಗಿರೆ, ನೀ ಭಯಪಡುವುದೇಕೆ ಮರ್ತ್ಯನಾದ ಮಾನವನಿಗೆ? ನೀ ಹೆದರಿ ನಡುಗುವುದೇಕೆ ಹುಲುಮಾನವನಿಗೆ?</verse>
				<verse number="13">ಆಕಾಶವನು ಹರಡಿ ಭೂಮಿಯನು ಸ್ಥಾಪಿಸಿದಾ ನಿನ್ನ ಸೃಷ್ಟಿಕರ್ತ ಸರ್ವೇಶ್ವರನನು ಮರೆತುಬಿಟ್ಟೆಯಾ? ನಾಶಮಾಡಲು ಹವಣಿಸುವ ಹಿಂಸಕನ ಕ್ರೋಧಕೆ ನೀ ಎಡೆಬಿಡದೆ ದಿನವೆಲ್ಲ ಅಂಜುತ್ತಿರಬೇಕೆ? ಆ ಹಿಂಸಕನ ಕ್ರೋಧವು ಈಗ ಹೋದುದೆಲ್ಲಿಗೆ?</verse>
				<verse number="14">ಸೆರೆಯಲ್ಲಿ ಸೊರಗಿದವನು ಸಾಯನು; ಇಳಿಯನವನು ಪಾತಾಳಕ್ಕೆ, ಬಿಡುಗಡೆಯಾಗುವನು ಬೇಗನೆ, ಇರದವನಿಗೆ ಅನ್ನದ ಕೊರತೆ.</verse>
				<verse number="15">ನಿನ್ನ ದೇವರಾದ ಸರ್ವೇಶ್ವರ ನಾನೆ ಸಮುದ್ರವನು ಕಲ್ಲೋಲಗೊಳಿಸುವವನು ನಾನೆ ಅದರ ಅಲೆಗಳನು ಭೋರ್ಗರೆಸುವವನು ನಾನೆ ನನ್ನ ಹೆಸರು ಸೇನಾಧೀಶ್ವರ ಸರ್ವೇಶ್ವರ!</verse>
				<verse number="16">ಆಕಾಶವನ್ನ ಹರಡಿದೆ; ಭುವಿಯನ್ನು ಸ್ಥಾಪಿಸಿದೆ; ಸಿಯೋನಿಗೆ ‘ನೀನೆನ್ನ ಜನತೆ’ ಎಂದೆ ನಾನಾಡುವುದನೆ ನಿನ್ನಿಂದ ಮಾತನಾಡಿಸಿದೆ, ನಿನ್ನನು ನನ್ನ ಅಂಗೈಯಲಿ ಕೊರೆದು ಕಾದಿಟ್ಟೆ.”</verse>
				<verse number="17">ಎಚ್ಚೆತ್ತುಕೊ, ಎಚ್ಚೆತ್ತುಕೊ, ನೀನೆದ್ದು ನಿಲ್ಲು ಜೆರುಸಲೇಮೆ! ಕುಡಿದುಬಿಟ್ಟಿರುವೆ ನೀ ಮತ್ತು ತರುವ ಪಾನಪಾತ್ರೆಯಿಂದ ತೊಟ್ಟನ್ನೂ ಬಿಡದೆ ಹೀರಿರುವೆ ಸರ್ವೇಶ್ವರನ ಕೋಪ ತುಂಬಿದಾ ಕೊಡದಿಂದ!</verse>
				<verse number="18">ಅವಳನ್ನು ಕರೆದುಕೊಂಡು ಹೋಗುವವನಾರೂ ಇಲ್ಲ, ಆಕೆ ಹೆತ್ತಾ ಮಕ್ಕಳೊಳು; ಅವಳ ಕೈಹಿಡಿದು ನಡೆಸುವವನು ಒಬ್ಬನೂ ಇಲ್ಲ, ಆಕೆ ಸಾಕಿದ ಕುವರರೊಳು.</verse>
				<verse number="19">ಬಂದೊದಗಿವೆ ಇಮ್ಮಡಿ ಬಾಧೆ ನಿನಗೆ ಪ್ರಲಾಪಿಸಿ ಗೋಳಿಡುವವರಾರು ನಿನ್ನೊಂದಿಗೆ? ನಾಡು ಹಾಳುಪಾಳಾಗಿದೆ, ತುತ್ತಾಗಿದೆ ಪ್ರಜೆ ಕ್ಷಾಮಕ್ಷೋಭೆಗೆ; ನಿನ್ನನು ಸಂತೈಸುವುದಾದರು ಹೇಗೆ?</verse>
				<verse number="20">ನಿನ್ನ ಮಕ್ಕಳು ಬಿದ್ದರು ಬೀದಿ ಚೌಕಗಳಲಿ ಬಲೆಗೆ ಬಿದ್ದ ಜಿಂಕೆಮರಿಯಂತಿಹರು ಪ್ರಜ್ಞೆತಪ್ಪಿ. ನಿನ್ನ ದೇವರನು ಮೂದಲಿಸಿಹರು ಸರ್ವೇಶ್ವರನ ರೋಷವನ್ನನುಭವಿಸಿಹರು.</verse>
				<verse number="21">ಇಂತಿರಲು ಶೋಷಿತಳೇ, ಕೇಳು ನನ್ನ ಮಾತನು ದ್ರಾಕ್ಷಾರಸದಿಂದಲ್ಲ ನೀ ಅಮಲೇರಿರುವುದು.</verse>
				<verse number="22">ಕೇಳು, ಸ್ವಾಮಿ ಸರ್ವೇಶ್ವರ ಆದ ನಾ ಹೇಳುವ ಮಾತನು: ತನ್ನ ಜನರ ಪರವಾಗಿ ವಾದಿಸುವ ನಿನ್ನ ದೇವರು ನಾನು; “ಇಗೋ, ಅಮಲೇರಿಸುವ ಪಾತ್ರೆಯನು ನನ್ನ ಕೋಪದಿಂದ ತುಂಬಿತುಳುಕುವಾ ಕೊಡವನು ನೀ ಕುಡಿಯಬಾರದೆಂದು ನಿನ್ನಿಂದ ತೆಗೆದುಬಿಡುವೆನು.</verse>
				<verse number="23">ಕೊಡುವೆ ಆ ಕೋಪದ ಕೊಡವನು ನಿನ್ನನು ಶೋಷಿಸಿದವರಿಗೆ ‘ನಾವು ತುಳಿದು ಹಾದುಹೋಗುವಂತೆ ನೆಲಕಚ್ಚಿ ಬೀಳು ಕೆಳಗೆ’ ಎಂದು ನಿಮ್ಮ ಬೆನ್ನನೆ ನೆಲವಾಗಿಸಿ, ಬೀದಿಕಸವನ್ನಾಗಿಸಿದವರಿಗೆ.”</verse>
			</chapter>
			<chapter number="52">
				<verse number="1">ಎಚ್ಚರಗೊಳ್ಳು, ಎಚ್ಚರಗೊಳ್ಳು ಓ ಸಿಯೋನೇ, ಶಕ್ತಿಶಾಲಿಯಾಗು ಪವಿತ್ರನಗರ ಜೆರುಸಲೇಮೆ. ಧರಿಸಿಕೊ ನಿನ್ನ ಚಂದದ ಉಡುಪನು ನಿನ್ನೊಳಗೆ ಪ್ರವೇಶಿಸರು ಇನ್ನು ಅಪವಿತ್ರರು, ಅನ್ಯಧರ್ಮೀಯರು.</verse>
				<verse number="2">ಖೈದಿಯಾಗಿ ಬಿದ್ದಿರುವ ಸಿಯೋನ್ ಕನ್ಯೆಯೆ, ಕಿತ್ತುಬಿಡು ಬಂಧನವನು ನಿನ್ನ ಕುತ್ತಿಗೆಯಿಂದ ಸಿಂಹಾಸನಾರೂಢಳಾಗು ಜೆರುಸಲೇಮೆ ಝಾಡಿಸಿ ಎದ್ದುನಿಂತು ದುಂಬುಧೂಳಿನಿಂದ!</verse>
				<verse number="3">ಏಕೆಂದರೆ ಸರ್ವೇಶ್ವರ ಹೀಗೆಂದು ಹೇಳಿದ್ದಾರೆ - ‘ಬೆಲೆಯಿಲ್ಲದೆ ಮಾರಲ್ಪಟ್ಟಿರಿ; ಹಣವಿಲ್ಲದೆ ಮುಕ್ತರಾಗುವಿರಿ.’</verse>
				<verse number="4">ದೇವರಾದ ಸರ್ವೇಶ್ವರ ಹೇಳಿಕೊಳ್ಳುವುದೇನೆಂದರೆ: “ಹಿಂದೆ ನನ್ನ ಜನರು ಈಜಿಪ್ಟಿನಲ್ಲೆ ಇಳಿದುಕೊಳ್ಳಲು ಹೋದರು. ಕೊನೆಗೆ ಅಸ್ಸೀರಿಯರು ಅವರನ್ನು ನಿಷ್ಕಾರಣವಾಗಿ ಹಿಂಸಿಸಿದರು.</verse>
				<verse number="5">ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಕರೆದೊಯ್ದಿದ್ದಾರೆ. ಇಲ್ಲಿ ನಾನು ಸುಮ್ಮನಿರುವುದಾದರೂ ಹೇಗೆ? ಆಳುತ್ತಿರುವವರು ನನ್ನ ಪ್ರಜೆಯಾದವರನ್ನು ಗೋಳಿಡಿಸುತ್ತಿದ್ದಾರೆ, ಎಡೆಬಿಡದೆ ನನ್ನ ಶ್ರೀ ನಾಮವು ದಿನವೆಲ್ಲ ದೂಷಣೆಗೆ ಗುರಿಯಾಗುತ್ತಿದೆ.</verse>
				<verse number="6">ಹೀಗಿರಲು ನನ್ನ ಜನರು ನನ್ನ ನಾಮದ ಮಹತ್ವವನ್ನು ಒಂದು ದಿನ ಅರಿತುಕೊಳ್ಳುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ.</verse>
				<verse number="7">ಶುಭಕರ ಸಮಾಚಾರವನು ತರುವ ಶಾಂತಿಸಮಾಧಾನವನು ಸಾರುವ ಸಂತಸದ ಸಂದೇಶವನು ಅರುಹುವ ಜೀವೋದ್ಧಾರವನು ಪ್ರಕಟಿಸುವ ‘ನಿನ್ನ ದೇವರೇ ರಾಜ್ಯಭಾರ ವಹಿಸುವ ಎಂದು ಸಿಯೋನಿಗೆ ತಿಳಿಯಪಡಿಸುತ್ತ ಪರ್ವತಗಳಿಂದ ಇಳಿದುಬರುವ ಶಾಂತಿದೂತನ ಪಾದಪದ್ಮಗಳು ಎಷ್ಟೊಂದು ಸುಂದರ!</verse>
				<verse number="8">ಆಲಿಸಿ ಕೇಳು ನಿನ್ನ ಕಾವಲುಗಾರರ ಕೂಗನು: ಸರ್ವೇಶ್ವರ ಸಿಯೋನಿಗೆ ಮರಳಿಬರುತ್ತಿರುವುದನು ಕಣ್ಣಾರೆ ಕಂಡು ಕೂಡಿಹಾಡುತ್ತಿಹರು ಗೀತವನು.</verse>
				<verse number="9">ಜೆರುಸಲೇಮಿನ ಹಾಳುಬಿದ್ದ ಪ್ರದೇಶಗಳೇ, ಜಯಕಾರಮಾಡಿ ತಟ್ಟನೆ, ಹಾಡಿರಿ ಒಟ್ಟಿಗೆ, ಬಿಡುಗಡೆ ಮಾಡಿರುವನು ಸರ್ವೇಶ್ವರ ಜೆರುಸಲೇಮನು ತಂದಿರುವನು ತನ್ನ ಜನರಿಗೆ ಸಮಾಧಾನವನು.</verse>
				<verse number="10">ಪ್ರದರ್ಶಿಸಿಹನು ಸ್ವಾಮಿ ಸರ್ವೇಶ್ವರನು ರಾಷ್ಟ್ರಗಳಿಗೆಲ್ಲ ತನ್ನ ಶ್ರೀಶಕ್ತಿಯನು. ಕಾಣುವುವು ಜಗದ ಎಲ್ಲೆ ಎಲ್ಲೆಗಳು ನಮ್ಮ ದೇವ ಸಾಧಿಸುವ ಮುಕ್ತಿಯನು.</verse>
				<verse number="11">ಹೊರಡಿರಿ, ನೀವು ಹೊರಡಿರಿ ಬಾಬಿಲೋನಿನಿಂದ ಅಶುದ್ಧವಾದುವನ್ನು ಮುಟ್ಟದೆ ತೆರಳಿ ಅಲ್ಲಿಂದ. ಸರ್ವೇಶ್ವರನ ಆರಾಧನಾ ಉಪಕರಣಗಳನು ಹೊರುವವರೇ, ನಿಮ್ಮನು ನೀವೆ ಪರಿಶುದ್ಧವಾಗಿಸಿರಿಕೊಂಡು ತೆರಳಿ ಹೊರಗೆ.</verse>
				<verse number="12">ಅವಸರವಾಗಿ ನೀವು ಹೊರಡಬೇಕಿಲ್ಲ ನೆಗೆನೆಗೆದು ನೀವು ಓಡಬೇಕಿಲ್ಲ. ಹೋಗುವನು ಸರ್ವೇಶ್ವರ ನಿಮಗೆ ಮುಂಬಲವಾಗಿ, ನಿಮಗಿರುವನು ಇಸ್ರಯೇಲ್ ದೇವರು ಹಿಂಬಲವಾಗಿ.</verse>
				<verse number="13">ನನ್ನ ದಾಸನಿದೋ, ಕೃತಾರ್ಥ ಆಗುವವನಾತ ಮಹಿಮಾನ್ವಿತ ಏರುವನು ಉನ್ನತ ಪದವಿಗಾತ.</verse>
				<verse number="14">ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ರೂಪಕ್ಕಿಂತ ವಿಕಾರಗೊಂಡಿದೆ ನಿಜ; ಆದರೆ ಹಲವರು ನೋಡಿ ಆದರು ಚಕಿತ.</verse>
				<verse number="15">ಅಂತೆಯೇ ಹಲರಾಷ್ಟ್ರಗಳು ಚಕಿತವಾಗುವುವು ಅಚ್ಚರಿಗೊಂಡು ಬಾಯಿಮುಚ್ಚಿಕೊಳ್ಳುವರು ಅರಸರು ಆತನನು ಕಂಡು. ಏಕೆನೆ, ನೋಡುವರವರು ಅಪೂರ್ವ ಸಂಗತಿಯೊಂದನು ಗ್ರಹಿಸಿಕೊಳ್ಳುವರವರು ಎಂದೂ ಕೇಳದ ವಿಷಯವನು.</verse>
			</chapter>
			<chapter number="53">
				<verse number="1">ನಂಬುವರಾರು ನಾವು ಕೇಳಿದ ಸಂಗತಿಯನು? ಗುರುತಿಸುವರಾರು ಸರ್ವೇಶ್ವರನ ಶಕ್ತಿಯನು?</verse>
				<verse number="2">ಸರ್ವೇಶ್ವರನ ಮುಂದೆ ಬೆಳೆದನಾತ ಸಸಿಯಂತೆ ಒಣನೆಲದೊಳಗೆ ಇಳಿಯುವ ಬೇರಿನಂತೆ. ಆತನಲಿ ಅಂದಚಂದಗಳಾವುವೂ ಇರಲಿಲ್ಲ, ನೋಡಲು ಲಕ್ಷಣವಾದುವು ಏನೂ ಕಾಣಲಿಲ್ಲ.</verse>
				<verse number="3">ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.</verse>
				<verse number="4">ನಿಜವಾಗಿ ವಹಿಸಿಕೊಂಡನಾತ ನಮ್ಮ ಬಾಧೆಗಳನು ಹೊರೆಯಂತೆ ಹೊತ್ತನಾತ ನಮ್ಮ ಕಷ್ಟಸಂಕಟಗಳನು ನಾವು ಭಾವಿಸಿದ್ದಾದರು ಏನು? ಆತ ದೇವರಿಂದ ಬಾಧಿತನೆಂದು ದಂಡನೆಗೆ ಗುರಿಯಾದವನು, ತಿರಸ್ಕೃತನಾದವನೆಂದು!</verse>
				<verse number="5">ಗಾಯಗೊಂಡನಾತ ನಮ್ಮ ಪಾಪಗಳ ನಿಮಿತ್ತ ಜಜ್ಜರಿತನಾದ ನಮ್ಮ ದ್ರೋಹಗಳ ದೆಸೆಯಿಂದ. ಶಿಕ್ಷೆಗೊಳಗಾದ ನಮ್ಮ ರಕ್ಷೆಗಾಗಿ ಪೆಟ್ಟುತಿಂದ ನಮ್ಮ ಸ್ವಸ್ಥತೆಗಾಗಿ.</verse>
				<verse number="6">ತೊಳಲುತ್ತಿದ್ದೆವು ನಾವೆಲ್ಲರು ದಾರಿತಪ್ಪಿದ ಕುರಿಗಳಂತೆ ಹಿಡಿಯುತ್ತಿದ್ದನು ಪ್ರತಿಯೊಬ್ಬನು ತನ್ನ ತನ್ನ ದಾರಿಯನ್ನೆ. ನಮ್ಮೆಲ್ಲರ ದೋಷವನು ಸರ್ವೇಶ್ವರ ಹಾಕಿದ್ದ ಆತನ ಮೇಲೆ.</verse>
				<verse number="7">ಬಾಧೆಗಳಿಗೊಳಗಾದ, ಹಿಂಸೆ ಸಹಿಸಿದ ಆತ ಬಾಯ್ದೆರೆಯದೆ. ಹೌದು, ಬಾಯ್ದೆರೆಯದಿದ್ದ ಬಲಿಗೊಯ್ದ ಕುರಿಮರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ.</verse>
				<verse number="8">ಎಳೆದೊಯ್ದರು ಬಂಧನದಿಂದ, ನ್ಯಾಯಸ್ಥಾನದಿಂದ ಹೌದು, ದೂರಮಾಡಿದರು ಆತನನು ಜೀವಲೋಕದಿಂದ. ವಧೆಯಾದನಾತ ನಮ್ಮ ಜನರ ಪಾಪದ ದೆಸೆಯಿಂದ. ಆದರೂ ಸಮಕಾಲೀನವರಾರು ಮರುಗಲಿಲ್ಲ ಕನಿಕರದಿಂದ.</verse>
				<verse number="9">ಮಾಡಲಿಲ್ಲ ಆತ ಯಾವ ಪಾಪಕೃತ್ಯ ಅವನ ಬಾಯಲಿರಲಿಲ್ಲ ವಂಚನೆಯ ವಾಕ್ಯ ಹೂಣಿದರಾತನನು ಸತ್ತಮೇಲೆ ದುರುಳರ ಹಾಗೂ ದುಷ್ಕರ್ಮಿಗಳ ನಡುವೆ.</verse>
				<verse number="10">ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.</verse>
				<verse number="11">ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.</verse>
				<verse number="12">ಎಂತಲೆ ನೀಡುವೆ ಇವನಿಗೆ ಪಾಲನ್ನು ದೊಡ್ಡವರ ಸಂಗಡ ಹಂಚಿಕೊಳ್ಳುವನು ಸೂರೆಯನ್ನು ಬಲಿಷ್ಠರ ಸಂಗಡ ಏಕೆನೆ ಪ್ರಾಣವನ್ನೆ ಧಾರೆಯೆರೆದು ಮರಣಹೊಂದಿದ ದ್ರೋಹಿಗಳೊಂದಿಗೆ ತನ್ನನೆ ಒಂದಾಗಿ ಎಣಿಸಿಕೊಂಡ. ಅನೇಕರ ಪಾಪವನ್ನು ಹೊತ್ತು ಅವರಿಗಾಗಿ ಪ್ರಾರ್ಥಿಸಿದ.</verse>
			</chapter>
			<chapter number="54">
				<verse number="1">ಆನಂದ ಗೀತೆಯನು ಹಾಡು ಹೆರದವಳೇ, ಬಂಜೆಯಾಗಿದ್ದವಳೇ; ಉಲ್ಲಾಸದಿಂದ ಅರಚು, ಬೇನೆಯನು ಅನುಭವಿಸದವಳೇ. ‘ಗಂಡನುಳ್ಳವಳಿಗಿಂತ ಹೆಚ್ಚು ಮಕ್ಕಳನ್ನು ಹೆರುವೆ’ ಎಂದು ಹೇಳುತ್ತಾರೆ ಸರ್ವೇಶ್ವರ ಸ್ವಾಮಿ ನಿನಗೆ.</verse>
				<verse number="2">ವಿಸ್ತರಿಸು ನಿನ್ನ ಗುಡಾರವನು, ಚಾಚು ಮುಂದಕೆ ಗುಡಾರದ ಬಟ್ಟೆಗಳನು, ಹೆದರಬೇಡ; ಉದ್ದಮಾಡು ಹಗ್ಗಗಳನು, ಬಲಪಡಿಸು ಗೂಟಗಳನು.</verse>
				<verse number="3">ಏಕೆಂದರೆ ಹಬ್ಬಿಕೊಳ್ಳುವೆ ನೀನು ಎಡಬಲದೊಳು ಎಲ್ಲೆಲ್ಲು, ವಶಮಾಡಿಕೊಳ್ಳುವರು ನಿನ್ನ ಸಂತಾನದವರು ಜನಾಂಗಗಳನು. ಜನಭರಿತವಾಗುವಂತೆ ಮಾಡುವರು ಪಾಳುಬಿದ್ದ ಪಟ್ಟಣಗಳನು.</verse>
				<verse number="4">ಅಂಜಬೇಡ, ನಿನಗಾಗುವುದಿಲ್ಲ ಅವಮಾನ ನಾಚಬೇಡ, ನಿನಗಾಗದು ಆಶಾಭಂಗ. ಮರೆವೆ ಯೌವನದಲ್ಲಿ ನಿನಗಾದ ಅವಮಾನವನು ವೈಧವ್ಯದಲ್ಲಾದ ನಿಂದೆ ನೆನಪಿಗೆ ಬಾರದಿನ್ನು.</verse>
				<verse number="5">ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.</verse>
				<verse number="6">ಗಂಡಬಿಟ್ಟು ಮನನೊಂದಿರುವ ಪತ್ನಿ ನೀನು ಹೌದು, ತ್ಯಜಿಸಲಾದ ಯೌವನದ ಪತ್ನಿ ನೀನು. ಸರ್ವೇಶ್ವರ ಕನಿಕರಿಸಿ ಕರೆದಿಹನು ನಿನ್ನನು. ಆ ನಿನ್ನ ದೇವರ ನುಡಿಯಿದು:</verse>
				<verse number="7">“ಬಿಟ್ಟಿದ್ದೆನು ನಿನ್ನನು ಕ್ಷಣಮಾತ್ರ ಪ್ರೀತಿಯಿಂದ ಸೇರಿಸಿಕೊಳ್ಳುವೆ ಹತ್ತಿರ.</verse>
				<verse number="8">ತಟ್ಟನೆ ಉಕ್ಕಿ ಹರಿಯುವ ಕೋಪದಿಂದ ಕ್ಷಣಮಾತ್ರ ಮುಖಮರೆಸಿಕೊಂಡೆ ನಿನ್ನಿಂದ ಕರುಣಿಸುವೆನು ನಿನ್ನನು ಶಾಶ್ವತ ಕೃಪೆಯಿಂದ.” ಇಂತೆನ್ನುತಿಹನು ನಿನ್ನ ಉದ್ಧಾರಕ ಸರ್ವೇಶ್ವರ.</verse>
				<verse number="9">“ಶಪಥಮಾಡಿದೆ ನಾನು ನೋಹನ ದಿನದಂದು: ಜಲಪ್ರಳಯವು ಭೂಮಿಯನು ಇ‍ನ್ನು ಮುಳುಗಿಸದೆಂದು. ಶಪಥಮಾಡುವೆ ಈಗ ‘ಕೋಪಮಾಡೆನು’ ಎಂದು ‘ಇನ್ನು ನಿನ್ನನು ಗದರಿಸೆನು’ ಎಂದು.</verse>
				<verse number="10">ಬಿರುಕುಬಿಟ್ಟಾವು ಬೆಟ್ಟಗಳು, ಕದಲಿಯಾವು ಗುಡ್ಡಗಳು, ನನ್ನ ಅಚಲ ಪ್ರೀತಿಯಾದರೊ ಬಿಟ್ಟುಹೋಗದು ನಿನ್ನನು. ಶಾಂತಿಸಮಾಧಾನದ ನನ್ನೀ ಒಪ್ಪಂದವು ಕದಲದು. ನಿನ್ನ ಮೇಲೆ ಕರುಣೆಯಿಟ್ಟಿರುವ ಸರ್ವೇಶ್ವರನ ನುಡಿಯಿದು.”</verse>
				<verse number="11">“ಶೋಷಣೆಗೆ, ಬಿರುಗಾಳಿಗೆ, ನಿರ್ಗತಿಗೆ ಗುರಿಯಾದವಳೇ, ನಿರ್ಮಿಸುವೆ ನಿನ್ನನು ವಜ್ರವೈಡೂರ್ಯಗಳಿಂದ ಅಸ್ತಿವಾರ ಹಾಕುವೆ ನಿನಗೆ ನೀಲಮಣಿಗಳಿಂದ.</verse>
				<verse number="12">ನಿರ್ಮಿಸುವೆ ನಿನ್ನ ಗೋಪುರಗಳನು ಮಾಣಿಕ್ಯಗಳಿಂದ ನಿನ್ನ ಪೌಳಿಗೋಡೆಯನು ಅನರ್ಘ್ಯ ರತ್ನಗಳಿಂದ.</verse>
				<verse number="13">ನಿನ್ನ ಮಕ್ಕಳು ಶಿಕ್ಷಿತರಾಗುವರು ನನ್ನಿಂದ ಸಮೃದ್ಧವಾಗಿ ಬಾಳುವರು ಅವರು ಸುಖಶಾಂತಿಯಿಂದ.</verse>
				<verse number="14">ನ್ಯಾಯನೀತಿ ನಿನಗಾಧಾರ; ದೂರವಿರುವುದು ಹಿಂಸಾಚಾರ. ಭಯಭೀತಿಗೆ ನೀ ದೂರ, ಅವು ಬಾರವು ನಿನ್ನ ಹತ್ತಿರ.</verse>
				<verse number="15">ನಿನ್ನ ಮೇಲೆ ಆಕ್ರಮಣಕೆ ಬರುವವನು ಪಡೆದಿಲ್ಲ ಅನುಮತಿ ನನ್ನಿಂದ ನಿನ್ನ ಮೇಲೆ ಆಕ್ರಮಣ ಮಾಡುವವನು ಪಡೆವನು ಸೋಲನು ನಿನ್ನಿಂದ.</verse>
				<verse number="16">ಕೆಂಡ ಊದಿ ಕುಲುಮೆಯಲ್ಲಿ ಆಯುಧಮಾಡುವ ಕಮ್ಮಾರನನು ನಾನೇ ಸೃಷ್ಟಿಸಿದಾತ. ವಿನಾಶಮಾಡಲು ಬರುವ ಕೆಡುಕರನು ನಾನೇ ಉಂಟುಮಾಡಿದಾತ.</verse>
				<verse number="17">ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.</verse>
			</chapter>
			<chapter number="55">
				<verse number="1">ಎಲೈ ಬಾಯಾರಿದ ಜನರೇ, ನೀರಿನ ಬಳಿಗೆ ಬನ್ನಿ ಹಣವಿಲ್ಲದವರೇ ಬನ್ನಿ, ಅನ್ನವನ್ನು ತೆಗೆದುಕೊಂಡು ತಿನ್ನಿ. ಹಾಲನು, ದ್ರಾಕ್ಷಾರಸವನು ಕ್ರಯವಿಲ್ಲದೆ ಕೊಂಡುಕೊಳ್ಳಿ.</verse>
				<verse number="2">ಆಹಾರವಲ್ಲದ್ದಕ್ಕೆ ಹಣವನು ವ್ಯಯಮಾಡುವುದೇಕೆ? ತೃಪ್ತಿ ತರದ ಪದಾರ್ಥಕ್ಕೆ ನಿಮ್ಮ ದುಡಿತದ ವೆಚ್ಚವೇಕೆ? ಕಿವಿಗೊಡಿ ನನಗೆ, ಒಳಿತನ್ನು ತಿಂದು ಆನಂದಪಡಿ ಆ ಮೃಷ್ಟಾನ್ನವನುಂಡು.</verse>
				<verse number="3">ಕಿವಿಯನ್ನಿತ್ತ ತಿರುಗಿಸಿ ಬನ್ನಿ ನನ್ನ ಬಳಿಗೆ, ಬದುಕಿಬಾಳುವಿರಿ ನೀವು ಕಿವಿಗೊಟ್ಟರೆನಗೆ. ದಾವೀದನಿಗೆ ವಾಗ್ದಾನವಿತ್ತ ವರವ ಈವೆ ನಿಮಗೆ ಮಾಡಿಕೊಳ್ಳುವೆ-ಚಿರವಾದ ಒಡಂಬಡಿಕೆಯನು ನಿಮ್ಮೊಂದಿಗೆ.</verse>
				<verse number="4">ನೇಮಿಸಿರುವೆ ಆತನನು ಜನಗಳಿಗೆ ಸಾಕ್ಷಿಯನ್ನಾಗಿ ಜನಾಂಗಗಳಿಗೆ ನಾಯಕನನ್ನಾಗಿ, ಅಧಿಪತಿಯನ್ನಾಗಿ.</verse>
				<verse number="5">ಎಲೈ ಇಸ್ರಯೇಲೇ, ನಿನ್ನ ದೇವರಾದ ಸರ್ವೇಶ್ವರನಿಗೋಸ್ಕರ ನಿನ್ನ ಮಹಿಮೆಪಡಿಸಿದ ಇಸ್ರಯೇಲಿನ ಪರಮಪಾವನನಿಗೋಸ್ಕರ ನೀ ಕರೆಗೊಡುವೆ ನಿನಗೆ ಗೊತ್ತಿಲ್ಲದ ಜನಾಂಗಕೆ. ಆಗ ಅಪರಿಚಿತರೂ ಓಡಿಬರುವರು ನಿನ್ನಾಶ್ರಯಕೆ.</verse>
				<verse number="6">ಅರಸಿರಿ ಸರ್ವೇಶ್ವರನನು ಆತ ದೊರಕುವ ವೇಳೆಯಲಿ ವಿನಂತಿಸಿರಿ ಆತನಿರುವಾಗಲೆ ಸಮೀಪದಲಿ.</verse>
				<verse number="7">ಬಿಟ್ಟುಬಿಡಲಿ ದುಷ್ಟನು ತನ್ನ ದುರ್ಮಾರ್ಗವನು ತೊರೆದುಬಿಡಲಿ ದುರುಳನು ದುರಾಲೋಚನೆಗಳನು. ಹಿಂದಿರುಗಿ ಬರಲಿ ಸರ್ವೇಶ್ವರನ ಬಳಿಗೆ ಕರುಣೆ ತೋರುವನು ಆತನು ಅವನಿಗೆ. ಆಶ್ರಯಪಡೆಯಲಿ ಅವನು ನಮ್ಮ ದೇವರಿಂದ ಕ್ಷಮಿಸುವನಾತನು ಮಹಾಕೃಪೆಯಿಂದ.</verse>
				<verse number="8">“ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಂಥಲ್ಲ ನನ್ನ ಮಾರ್ಗಗಳು ನಿಮ್ಮ ಮಾರ್ಗಗಳಂಥಲ್ಲ” ಎಂದಿಹನು ಸರ್ವೇಶ್ವರ.</verse>
				<verse number="9">“ಎಷ್ಟೋ ಉನ್ನತ ಆಕಾಶವು ಭೂಮಿಯಿಂದ ಅಷ್ಟೂ ಉನ್ನತ ನನ್ನ ಮಾರ್ಗ ನಿಮ್ಮ ಮಾರ್ಗಗಳಿಗಿಂತ, ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತ.</verse>
				<verse number="10">ಮಳೆಯೂ ಹಿಮವೂ ಆಕಾಶಮಂಡಲದಿಂದಿಳಿದು ಬಂದು ತೋಯಿಸಿ, ಹಸಿರುಗೊಳಿಸಿ, ಹುಲುಸು ಮಾಡುತ್ತವೆ ಭೂಮಿಯನು. ಬಿತ್ತುವವನಿಗೆ ಬೀಜ, ಉಣ್ಣುವವನಿಗೆ ಆಹಾರ ಒದಗಿಸದೆ, ಹಿಂದಿರುಗಿ ಬರುವುದಿಲ್ಲ ಅವು ಸುಮ್ಮನೆ ಬಂದಲ್ಲಿಗೆ.</verse>
				<verse number="11">ಅಂತೆಯೇ, ನನ್ನ ಬಾಯಿಂದ ಹೊರಡುವ ಮಾತು ನನ್ನ ಇಷ್ಟಾರ್ಥವನು ನೆರವೇರಿಸಿದ ಹೊರತು, ನನ್ನ ಉದ್ದೇಶವನು ಕೈಗೂಡಿಸಿದ ಹೊರತು. ನನ್ನ ಬಳಿಗೆ ವ್ಯರ್ಥವಾಗಿ ಹಿಂದಿರುಗದು.</verse>
				<verse number="12">ಹೊರಡುವಿರಿ ನೀವು ಆನಂದಭರಿತರಾಗಿ ಬರುವಿರಿ ನೆಮ್ಮದಿಯಿಂದ ಸಾಲಾಗಿ. ನಿಮ್ಮ ಮುಂದೆ ತಟ್ಟಾಡುವುವು ಬೆಟ್ಟಗುಡ್ಡಗಳು ಚಪ್ಪಾಳೆ ಹೊಡೆಯುವುವು ಅಡವಿಯ ಗಿಡಮರಗಳು.</verse>
				<verse number="13">ಬೆಳೆಯುವುದು ಮುಳ್ಳಿಗೆ ಬದಲಾಗಿ ದೇವದಾರು, ದತ್ತೂರಿಗೆ ಪ್ರತಿಯಾಗಿ ಸುಗಂಧದ ಮರವು. ಉಳಿದಿರುತ್ತದೆ ಆ ವನವು ಶಾಶ್ವತ ಗುರುತಾಗಿ ಸರ್ವೇಶ್ವರ ಸ್ವಾಮಿಯ ನಾಮಸ್ಮರಣೆಗಾಗಿ.”</verse>
			</chapter>
			<chapter number="56">
				<verse number="1">ಸರ್ವೇಶ್ವರ ಸ್ವಾಮಿ ಹೇಳುವುದು ಏನೆಂದರೆ: ನ್ಯಾಯವನ್ನು ಅನುಸರಿಸಿರಿ. ನೀತಿಯನ್ನು ಆಚರಿಸಿರಿ. ಏಕೆಂದರೆ ನಾನೀಡುವ ಮುಕ್ತಿಯು ಬೇಗನೆ ಬರುವುದು; ನಾನು ತರುವ ಸತ್ಸಂಬಂಧವು ಕೂಡಲೆ ಬೆಳಗುವುದು.</verse>
				<verse number="2">ಅದನ್ನು ಕೈಗೊಳ್ಳುವವನು ಧನ್ಯನು! ಅದನ್ನು ಸುಭದ್ರವಾಗಿ ಕಾದಿರಿಸಿಕೊಂಡು ಸಬ್ಬತ್ ದಿನವನ್ನು ಹೊಲೆಮಾಡದೆ ಆಚರಿಸುತ್ತಾ ಬರುವವನು ಹಾಗೂ ಯಾವ ಕೇಡಿಗೂ ಕೈಹಾಕದವನು ಭಾಗ್ಯವಂತನು!</verse>
				<verse number="3">ಸರ್ವೇಶ್ವರನನ್ನು ಅವಲಂಬಿಸುವ ವಿದೇಶಿಯನು, ‘ಸರ್ವೇಶ್ವರ ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಬಹಿಷ್ಕರಿಸುವನು’ ಎಂದು ಹೇಳದಿರಲಿ.</verse>
				<verse number="4">ಅಂಥವನಿಗೆ ಸರ್ವೇಶ್ವರ ಸ್ವಾಮಿ ಹೇಳುವುದನ್ನು ಕೇಳು: “ಸಬ್ಬತ್‍ದಿನಗಳನ್ನು ನನ್ನ ದಿನಗಳೆಂದು ಆಚರಿಸಿ, ನನಗೆ ಮೆಚ್ಚುಗೆಯಾದುವನ್ನು ಕೈಗೊಂಡು, ನನ್ನ ಒಡಂಬಡಿಕೆಯನ್ನು ಸುಭದ್ರವಾಗಿ ಪಾಲಿಸಿಕೊಂಡು ಬರುವ ನಪುಂಸಕರಿಗೆ,</verse>
				<verse number="5">ನನ್ನ ಆಲಯದಲ್ಲೆ, ಅದರ ಪ್ರಾಕಾರಗಳಲ್ಲೆ, ಅವರ ಸ್ಮಾರಕ ಶಿಲೆಗಳನ್ನು ಇಡುವೆನು. ಮಕ್ಕಳನ್ನು ಪಡೆದವರಿಗಿಂತಲು ಶ್ರೇಷ್ಠವಾದ ಹೆಸರನ್ನು ಅವರಿಗೆ ದಯಪಾಲಿಸುವೆನು. ಹೌದು, ಎಂದಿಗೂ ಅಳಿಯದ, ಶಾಶ್ವತವಾಗಿ ಉಳಿಯುವ, ಹೆಸರನ್ನು ಅವರಿಗೆ ದಯಪಾಲಿಸುವೆನು.</verse>
				<verse number="6">ಅನ್ಯದೇಶೀಯರಲ್ಲಿ ಯಾರು ಯಾರು ‘ಸರ್ವೇಶ್ವರ’ ಎಂದು ನನ್ನನ್ನು ಅವಲಂಭಿಸಿ, ಪೂಜಿಸಿ, ನನ್ನ ನಾಮವನ್ನು ಪ್ರೀತಿಸಿ, ನನಗೆ ದಾಸನಾಗಿ, ಸಬ್ಬತ್‍ದಿನವನ್ನು ಹೊಲೆಮಾಡದೆ ನನ್ನ ದಿನವೆಂದು ಆಚರಿಸಿ, ಜೊತೆಗೆ ನನ್ನ ಒಡಂಬಡಿಕೆಯನ್ನು ಸುಭದ್ರವಾಗಿ ಪಾಲಿಸುತ್ತಾರೋ,</verse>
				<verse number="7">ಅವರೆಲ್ಲರನ್ನು ನನ್ನ ಪವಿತ್ರಪರ್ವತಕ್ಕೆ ಬರಮಾಡುವೆನು; ನನ್ನ ಪ್ರಾರ್ಥನಾಲಯದಲ್ಲಿ ಅವರನ್ನು ಆನಂದಗೊಳಿಸುವೆನು; ನನ್ನ ಬಲಿಪೀಠದ ಮೇಲೆ ಅವರು ನೀಡುವ ದಹನಬಲಿಗಳನ್ನೂ ಅರ್ಪಣೆಗಳನ್ನೂ ಸಂತೋಷದಿಂದ ಸ್ವೀಕರಿಸುವೆನು. ನನ್ನ ಆಲಯ ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.”</verse>
				<verse number="8">ಇಸ್ರಯೇಲಿನ ಸೆರೆಹೋದ ಜನರನ್ನು ಬರಮಾಡಿಕೊಳ್ಳುವ ದೇವರಾದ ಸರ್ವೇಶ್ವರ, “ನಾನು ಕೂಡಿಸಿಕೊಂಡ ಇಸ್ರಯೇಲ ಜನರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು” ಎಂದಿದ್ದಾರೆ.</verse>
				<verse number="9">“ಕಾಡಿನ ಮೃಗಗಳೇ ಬನ್ನಿ, ಬಂದು ನುಂಗಿಬಿಡಿ!</verse>
				<verse number="10">ಈ ಕಾವಲುಗಾರರು ಕುರುಡರು, ಇವರಿಗೆ ತಿಳುವಳಿಕೆಯಿಲ್ಲ. ಇವರೆಲ್ಲರೂ ಬೊಗಳಲಾರದ ಮೂಕನಾಯಿಗಳು, ಮಲಗಿಕೊಂಡು ಕನವರಿಸುವ ನಿದ್ದೆಕೋರ ನಾಯಿಗಳು.</verse>
				<verse number="11">ಹೊಟ್ಟೆಬಾಕ ಕುನ್ನಿಗಳು; ಎಂದಿಗೂ ತೃಪ್ತಿ ಪಡೆಯದ ಶುನಕಗಳು. ಇಂಥವರು ಕುರಿಗಳನ್ನು ಕಾಯಲು ಯೋಗ್ಯರೋ? ಇವರು ಬುದ್ಧಿಹೀನರು. ಇವರಲ್ಲಿ ಪ್ರತಿಯೊಬ್ಬನು ಕೊಳ್ಳೆಹೊಡೆಯಬೇಕೆಂದು ತನ್ನದೇ ಆದ ಮಾರ್ಗವನ್ನು ಹಿಡಿದಿದ್ದಾನೆ.</verse>
				<verse number="12">ಅಲ್ಲದೆ, ‘ಬನ್ನಿ, ಮಧುಪಾನವನ್ನು ತರಿಸುತ್ತೇನೆ. ಅಮಲೇರಿಸುವ ಮದ್ಯವನ್ನು ಬೇಕಾದಷ್ಟು ಕುಡಿಯೋಣ; ಆಗ ಇನ್ನೂ ಸಂಭ್ರಮವಾಗಿರುವುದು!’ ಎಂದು ಹರಟಿಕೊಳ್ಳುವರು.”</verse>
			</chapter>
			<chapter number="57">
				<verse number="1">ಸಜ್ಜನರು ಸಾಯುತ್ತಾರೆ, ಆದರೆ ಯಾರೂ ಮನಸ್ಸಿಗೆ ಹಚ್ಚಿಕೊಳ್ಳುವುದಿಲ್ಲ. ಶರಣರು ಕಣ್ಮರೆಯಾಗುತ್ತಾರೆ, ‘ಇವರು ಕೇಡಿನಿಂದ ಪಾರಾದರು’ ಎಂದು ಯಾರೂ ಅರ್ಥಮಾಡಿಕೊಳ್ಳುವುದಿಲ್ಲ.</verse>
				<verse number="2">ಸನ್ಮಾರ್ಗದಲ್ಲಿ ನಡೆಯುವವರು ಶಯ್ಯೆಯಲ್ಲಿ ವಿಶ್ರಮಿಸುತ್ತಾರೆ; ಶಾಂತಿಸಮಾಧಾನವನ್ನು ಸೇರುತ್ತಾರೆ.</verse>
				<verse number="3">ಮಾಟಗಾತಿಯ ಮಕ್ಕಳೇ, ವೇಶ್ಯೆ ವ್ಯಭಿಚಾರಿಗಳ ಸಂತಾನದವರೇ, ಬನ್ನಿ ಇಲ್ಲಿಗೆ.</verse>
				<verse number="4">ಯಾರನ್ನು ಅಣಕಿಸಿ ಹಾಸ್ಯಮಾಡುತ್ತಿದ್ದೀರಿ? ಯಾರನ್ನು ನೋಡಿ ಬಾಯಿಕಿಸಿದು ನಾಲಿಗೆಯನ್ನು ಚಾಚುತ್ತೀರಿ?</verse>
				<verse number="5">ಓಕ್‍ಮರಗಳ ತೋಪುಗಳಲ್ಲೂ ಸೊಂಪಾಗಿ ಹರಡಿರುವ ಮರಗಳ ಅಡಿಯಲ್ಲೂ ಕಾಮಾಗ್ನಿಯಿಂದ ಕುದಿಯುತ್ತೀರಿ. ಹೊಳೆಕೊರೆದ ಡೊಗರುಗಳಲ್ಲೂ ಬಂಡೆಬಿರುಕುಗಳಲ್ಲೂ ಮಕ್ಕಳನ್ನು ಬಲಿಕೊಡುತ್ತೀರಿ. ನೀವು ವಿದ್ರೋಹಿಗಳ ಸಂತಾನ, ಸುಳ್ಳುಗಾರರ ಸಂತತಿ.</verse>
				<verse number="6">ಎಲೈ ದುಷ್ಟ ಸಂತಾನವೇ, ಹೊಳೆಯ ನುಣುಪುಗಲ್ಲುಗಳೆಂದರೆ ನಿನಗೆ ಅತಿಪ್ರಿಯ. ಹೌದು, ಅವೇ ನಿನ್ನ ಪಾಲಿನ ಭಾಗ್ಯ. ಅವುಗಳಿಗೆ ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದಿರುವೆ, ದವಸ ಧಾನ್ಯಗಳನ್ನು ಕಾಣಿಕೆಯಾಗಿ ಅರ್ಪಿಸಿರುವೆ. ಇದನ್ನೆಲ್ಲ ನೋಡಿ ಕೋಪವನ್ನು ನಾನು ಅಡಗಿಸಿಕೊಳ್ಳಲಾದೀತೆ?</verse>
				<verse number="7">ಬಲಿಯರ್ಪಿಸಲು ಎತ್ತರವಾದ, ದೊಡ್ಡದಾದ ಬೆಟ್ಟವನ್ನು ಹತ್ತಿರುವೆ. ಆದರೆ ಅಲ್ಲಿ ಕಾಮಕೇಳಿಗಳಲ್ಲಿ ತೊಡಗಿರುವೆ.</verse>
				<verse number="8">ಬಾಗಿಲಿನ ಹಾಗು ಬಾಗಿಲಿನ ನಿಲುವಿನ ಹಿಂಭಾಗದಲ್ಲಿ ಅಶ್ಲೀಲ ಸ್ಮಾರಕಗಳನ್ನು ಇಟ್ಟುಕೊಂಡಿರುವೆ. ನನ್ನನ್ನು ತ್ಯಜಿಸಿಬಿಟ್ಟು, ನಿನ್ನ ಹಾಸಿಗೆಯನ್ನು ಬಿಚ್ಚಿರುವೆ. ಅನ್ಯರ ಸಂಗಮವನ್ನು ಬಯಸಿ ಅವರೊಂದಿಗೆ ಬೆಲೆಗೆ ಒಪ್ಪಂದ ಮಾಡಿಕೊಂಡಿರುವೆ; ಬಳಿಕ ಕಾಮವಿಲಾಸದಲ್ಲಿ ತೊಡಗಿರುವೆ.</verse>
				<verse number="9">ಬೇಕಾದಷ್ಟು ಪರಿಮಳ ದ್ರವ್ಯವನ್ನು ಕೂಡಿಸಿಕೊಂಡು, ಸುಗಂಧ ತೈಲವನ್ನು ತೆಗೆದುಕೊಂಡು ‘ಮೋಲೆಕ್’ ದೇವತೆಯ ಬಳಿಗೆ ಯಾತ್ರೆಗೈದಿರುವೆ. (ಹೊಸ ದೇವತೆಗಳನ್ನು ಹುಡುಕಲು) ನಿನ್ನ ದೂತರನ್ನು ದೂರದೂರ ನಾಡುಗಳಿಗೆ ಕಳಿಸಿರುವೆ. ಪಾತಾಳದವರೆಗೂ ನಿನ್ನನ್ನು ತಗ್ಗಿಸಿಕೊಂಡಿರುವೆ.</verse>
				<verse number="10">ನಡೆದು ನಡೆದು ದಣಿದಿದ್ದರೂ ‘ಇನ್ನು ಪ್ರಯೋಜನವಿಲ್ಲ’ ಎಂದುಕೊಳ್ಳಲಿಲ್ಲ. ಹೊಸ ಚೈತನ್ಯವನ್ನು ತಂದುಕೊಂಡು ನಿಲ್ಲದೆ ಮುಂದುವರೆದಿರುವೆ.</verse>
				<verse number="11">ನೀನು ಯಾರಿಗೆ ಹೆದರಿ ಬೆದರಿ, ನನ್ನನ್ನು ಮರೆತು, ನನಗೆ ಸುಳ್ಳಾಡಿ ಮೋಸಮಾಡಿರುವೆ? ಇಂಥ ದ್ರೋಹಕ್ಕೂ ನೀನು ಹಿಂಜರಿಯಲಿಲ್ಲವಲ್ಲಾ! ಬಹುಕಾಲದಿಂದ ನಾನು ಸುಮ್ಮನೆ ಇದ್ದುದರಿಂದಲೇ ನೀನು ನನ್ನನ್ನು ಗೌರವಿಸದೆ ಇರುವುದಕ್ಕೆ ಕಾರಣವಲ್ಲವೆ?</verse>
				<verse number="12">ನಿನ್ನ ನಡತೆಯನ್ನು ಬಯಲಿಗೆ ತರುವೆನು. ಆಗ ನಿನ್ನ ಕೃತ್ಯಗಳು ನಿನಗೆ ನೆರವಾಗವು.</verse>
				<verse number="13">ಸಹಾಯಕ್ಕಾಗಿ ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ಈ ವಿಗ್ರಹಗಳೇ ನಿನಗೆ ರಕ್ಷಣೆ ನೀಡಲಿ. ಇವುಗಳನ್ನೆಲ್ಲ ಗಾಳಿ ಬಡಿದುಕೊಂಡು ಹೋಗುವುದು. ಕೇವಲ ಒಂದು ಉಸಿರು ಸಾಕು, ಇವುಗಳನ್ನು ಒಯ್ದುಬಿಡಲು. ಆದರೆ ನನ್ನನ್ನು ಆಶ್ರಯಿಸಿಕೊಂಡವನು ನಾಡಿಗೆ ಬಾಧ್ಯಸ್ಥನಾಗುವನು; ನನ್ನ ಪವಿತ್ರ ಪರ್ವತವನ್ನು ಸ್ವಾಧೀನಮಾಡಿಕೊಳ್ಳುವನು.</verse>
				<verse number="14">“ಸರಿಮಾಡಿ ಮಾರ್ಗವನು ಮಣ್ಣುಹಾಕಿ, ಹಾಕಿ; ನನ್ನ ಜನರ ದಾರಿಯಿಂದ ತೊಡರುಗಳನ್ನು ಎತ್ತಿಹಾಕಿ,” ಎನ್ನುತ್ತದೆ ವಾಣಿಯೊಂದು.</verse>
				<verse number="15">“ಪರಮ ಪವಿತ್ರನ, ಶಾಶ್ವತ ಲೋಕದ ನಿತ್ಯನಿವಾಸಿಯಾದ ಮಹೋನ್ನತನ ಮಾತಿದು: ಉನ್ನತವಾದ ಪವಿತ್ರಾಲಯದಲ್ಲಿ ವಾಸಿಸುವವನು ನಾನು; ಆದರೂ ಪಶ್ಚಾತ್ತಾಪಪಡುವ ದೀನಮನದೊಂದಿಗೆ ನಾನಿದ್ದೇನೆ. ದೀನನ ಆತ್ಮವನ್ನು ಹಾಗು ಪಶ್ಚಾತ್ತಾಪಪಡುವ ಮನಸ್ಸನ್ನು ಉಜ್ಜೀವಗೊಳಿಸುವವನಾಗಿದ್ದೇನೆ.</verse>
				<verse number="16">ನಾನು ಸರ್ವದಾ ತಪ್ಪು ಹುಡುಕುವವನಲ್ಲ; ಕಡೆಯ ತನಕ ಕೋಪದಿಂದಿರುವವನಲ್ಲ. ಹಾಗೆ ಮಾಡಿದರೆ ಜೀವಾತ್ಮ ಕುಂದಿಹೋದೀತು. ಆ ಜೀವಿಗಳನ್ನು ಸೃಷ್ಟಿಸಿದವನು ನಾನೇ ಅಲ್ಲವೇ?</verse>
				<verse number="17">ನನ್ನ ಜನರ ದುರಾಶೆಯ ದೋಷದ ನಿಮಿತ್ತ ನಾನು ಕೋಪಗೊಂಡೆ, ದಂಡಿಸಿದೆ, ಮುಖ ಮರೆಸಿಕೊಂಡೆ, ರೋಷಭರಿತನಾದೆ. ಅವರಾದರೋ ಮೊಂಡುತನದಿಂದ ಮನಸ್ಸಿಗೆ ತೋಚಿದ ಹಾಗೆ ನಡೆಯುತ್ತಾ ಬಂದಿದ್ದಾರೆ.</verse>
				<verse number="18">“ಅವರ ವರ್ತನೆಯನ್ನು ನೋಡಿದ್ದೇನೆ. ಆದರೂ ಅವರನ್ನು ಸ್ವಸ್ಥಪಡಿಸುತ್ತೇನೆ. ಅವರಿಗೆ ದಾರಿತೋರಿಸುತ್ತಾ, ಅವರಿಗೂ ಅವರಿಗಾಗಿ ದುಃಖಿಸುವವರಿಗೂ ಸಾಂತ್ವನ ಸಂಭಾವನೆಯನ್ನು ಕೊಡುತ್ತೇನೆ.</verse>
				<verse number="19">ಅವರ ಬಾಯಿಂದ ಸ್ತುತಿಸ್ತೋತ್ರ ಹೊರಬರುವಂತೆ ಮಾಡುತ್ತೇನೆ. ಶಾಂತಿ! ಹತ್ತಿರವಿರುವವರಿಗೂ ದೂರವಿರುವವರಿಗೂ ಶಾಂತಿಸಮಾಧಾನ! ನಾನು ಅವರನ್ನು ಸ್ವಸ್ಥಪಡಿಸುತ್ತೇನೆ,” ಎನ್ನುತ್ತಾರೆ ಸರ್ವೇಶ್ವರ ಸ್ವಾಮಿ.</verse>
				<verse number="20">“ಆದರೆ, ದುರುಳರು ಅಲ್ಲೋಲಕಲ್ಲೋಲವಾದ ಸಮುದ್ರದಂತೆ ಇದ್ದಾರೆ. ಅದು ಸುಮ್ಮನಿರದು - ಅದರ ಅಲೆಗಳು ಕೆಸರನ್ನೂ ಕೊಳಚೆಯನ್ನೂ ಕಕ್ಕುತ್ತಾ ಇರುತ್ತದೆ.</verse>
				<verse number="21">ದುರುಳರಿಗೆ ಇಲ್ಲ ಶಾಂತಿಸಮಾಧಾನ,” ಎನ್ನುತ್ತಾರೆ ದೇವರು.</verse>
			</chapter>
			<chapter number="58">
				<verse number="1">ಸರ್ವೇಶ್ವರ ಸ್ವಾಮಿ ಇಂತೆನ್ನುತ್ತಾರೆ: “ಗಟ್ಟಿಯಾಗಿ ಕೂಗು, ನಿಲ್ಲಿಸಬೇಡ; ಕೊಂಬಿನಂತೆ ಸ್ವರವೆತ್ತಿ ನನ್ನ ಜನರಿಗೆ ಅವರ ದ್ರೋಹವನ್ನು ತಿಳಿಸು; ಯಕೋಬ ವಂಶದವರಿಗೆ ಅವರ ಪಾಪವನ್ನು ತಿಳಿಸು;</verse>
				<verse number="2">ತಮ್ಮ ದೇವರ ವಿಧಿನಿಯಮಗಳನ್ನು ಬಿಡದೆ, ಧರ್ಮವನ್ನು ಆಚರಿಸುವ ಜನಾಂಗವೋ ಎಂಬಂತೆ, ಇವರು ದಿನದಿನವೂ ನನ್ನ ದರ್ಶನಕ್ಕಾಗಿ ಬರುತ್ತಾರೆ; ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಸಂತೋಷಿಸುವಂತೆ ನಟಿಸುತ್ತಾರೆ. ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳುತ್ತಾರೆ. ದೇವದರ್ಶನದಲ್ಲಿ ಆನಂದಿಸುವವರಂತೆ ತೋರಿಸಿಕೊಳ್ಳುತ್ತಾರೆ.”</verse>
				<verse number="3">“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ? ನಮ್ಮನ್ನು ನಾವೇ ತಗ್ಗಿಸಿಕೊಂಡಿದ್ದೇವೆ, ನೀನು ಗಮನಿಸದೆ ಇರುವುದೇಕೆ?” ಎಂದುಕೊಳ್ಳುತ್ತಾರೆ.</verse>
				<verse number="4">“ನಿಮ್ಮ ಉಪವಾಸದ ಪರಿಣಾಮಗಳು ಇಷ್ಟೆ: ವ್ಯಾಜ್ಯ, ಕಲಹ, ಗುದ್ದಾಟ. ಇಲ್ಲಿಯವರೆಗೆ ನೀವು ಮಾಡಿದಂತೆ ಉಪವಾಸಮಾಡಿದರೆ, ನಿಮ್ಮ ಪ್ರಾರ್ಥನೆ ಪರಲೋಕವನ್ನು ಮುಟ್ಟುವುದಿಲ್ಲ.</verse>
				<verse number="5">ಸ್ವಾರ್ಥ ನಿಗ್ರಹಕ್ಕಾಗಿ ನಾನು ನೇಮಿಸಿದ ಉಪವಾಸದ ದಿನ ಇಂಥದೋ? ಒಬ್ಬನು ಜೊಂಡಿನಂತೆ ತಲೆಯನ್ನು ಬಗ್ಗಿಸಿಕೊಳ್ಳುವುದು, ಗೋಣೀತಟ್ಟನ್ನು ಉಟ್ಟುಕೊಳ್ಳುವುದು, ಬೂದಿಯ ಗುಂಡಿಯಲ್ಲಿ ಕುಳಿತುಕೊಳ್ಳುವುದು, ಇವು ನನಗೆ ಮೆಚ್ಚುಗೆಯಾಗುವ ಉಪವಾಸ ಎನ್ನುತ್ತೀರೊ?</verse>
				<verse number="6">“ನಾನು ಹೇಳುವುದನ್ನು ಕೇಳಿ: ಅನ್ಯಾಯದ ಬಂಧನಗಳನ್ನು ಬಿಚ್ಚುವುದು, ಭಾರವಾದ ನೊಗದ ಕಣಿಗಳನ್ನು ಕಳಚುವುದು, ಜರ್ಜರಿತರಾದವರನ್ನು ಬಿಡುಗಡೆಮಾಡುವುದು,</verse>
				<verse number="7">ಹಸಿದವರಿಗೆ ಅನ್ನ ಹಾಕುವುದು, ನೆಲೆಯಿಲ್ಲದೆ ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯಾದವರನ್ನು ಕಂಡಾಗ ಅವರಿಗೆ ಬಟ್ಟೆಹೊದಿಸುವುದು, ನಿನ್ನ ರಕ್ತಸಂಬಂಧಿಕರಿಂದ ಮುಖ ಮರೆಮಾಡಿಕೊಳ್ಳದಿರುವುದು, ಇದೇ ಅಲ್ಲವೆ ನನಗೆ ಇಷ್ಟಕರವಾದ ಉಪವಾಸವ್ರತ?</verse>
				<verse number="8">“ಇದನ್ನು ಆಚರಿಸುವಾಗ ನೀವು ಉದಯಕಾಲದ ಸೂರ್ಯನಂತೆ ಪ್ರಜ್ವಲಿಸುವಿರಿ. ಆರೋಗ್ಯಭಾಗ್ಯವು ನಿಮಗೆ ಬೇಗನೆ ದೊರಕುವುದು. ನಿಮ್ಮ ಸದಾಚಾರವೆ ನಿಮಗೆ ಮುಂಬಲವಾಗಿ ನಡೆಸುವುದು; ಸರ್ವೇಶ್ವರ ಸ್ವಾಮಿಯ ಮಹಿಮೆ ನಿಮಗೆ ಹಿಂಬಲವಾಗಿ ಇರುವುದು.</verse>
				<verse number="9">ಆಗ ನೀವು ಪ್ರಾರ್ಥಿಸಿದರೆ, ಆ ಸ್ವಾಮಿ ನಿಮಗೆ ಉತ್ತರಿಸುವರು; ಮೊರೆಯಿಟ್ಟು ಕರೆದರೆ ‘ಇಗೋ ಆಲಿಸುತ್ತಿದ್ದೇನೆ’ ಎನ್ನುವರು. ನೀವು ದಬ್ಬಾಳಿಕೆ ನಡೆಸುವುದನ್ನೂ ಇತರರನ್ನು ಜರೆಯುವುದನ್ನೂ ಕೇಡನ್ನು ನುಡಿಯುವುದನ್ನೂ ನಿಮ್ಮ ನಡುವೆಯಿಂದ ತೊಲಗಿಸಿದರೆ</verse>
				<verse number="10">ಹಾಗೂ ಹಸಿದವರಿಗೆ ಜೀವನಾಂಶವನ್ನೂ ಬಡವರಿಗೆ ಅಗತ್ಯವಾದುದನ್ನೂ ನೀಡಿದರೆ, ನಿಮ್ಮ ಜ್ಯೋತಿ ಕತ್ತಲಲ್ಲಿ ಬೆಳಗುವುದು; ಅಂಧಕಾರ ನೀಗಿ ಮಧ್ಯಾಹ್ನವಾಗುವುದು.</verse>
				<verse number="11">ಸರ್ವೇಶ್ವರ ಸ್ವಾಮಿ ನಿಮ್ಮನ್ನು ನಿರಂತರವಾಗಿ ಮುನ್ನಡೆಸುವರು; ಮರುಭೂಮಿಯಲ್ಲೂ ನಿಮಗೆ ಮನಃತೃಪ್ತಿಯನ್ನು ನೀಡುವರು; ನಿಮ್ಮ ಎಲುಬುಗಳನ್ನು ಬಲಪಡಿಸುವರು; ನೀರೆರೆದ ತೋಟದಂತೆಯೂ ಬತ್ತಿಹೋಗದ ಬುಗ್ಗೆಯಂತೆಯೂ ನೀವು ಇರುವಿರಿ.</verse>
				<verse number="12">ಪುರಾತನಕಾಲದ ಪಾಳುಬಿದ್ದ ಮನೆಗಳನ್ನು ನಿಮ್ಮವರು ಮರಳಿ ಕಟ್ಟುವರು. ತಲತಲಾಂತರಗಳಿಂದ ಪಾಳುಬಿದ್ದಿರುವ ತಳಹದಿಗಳ ಮೇಲೆ ಕಟ್ಟಡಗಳನ್ನು ನೀವು ನಿರ್ಮಿಸುವಿರಿ. ‘ಬಿದ್ದ ಗೋಡೆಯನ್ನು ಎಬ್ಬಿಸಿದ ರಾಷ್ಟ್ರ’ ಎಂಬ ಬಿರುದು ನಿಮಗೆ ಬರುವುದು.”</verse>
				<verse number="13">“ನೀವು ಸಬ್ಬತ್‍ದಿನವನ್ನು ತಾತ್ಸಾರಮಾಡದೆ, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ದೈನಂದಿನ ವ್ಯವಹಾರವನ್ನು ನಡೆಸದೆ, ಸ್ವೇಚ್ಛೆಯಾಗಿ ವರ್ತಿಸದೆ, ಸ್ವಕಾರ್ಯದಲ್ಲೇ ನಿರತರಾಗದೆ, ಹರಟೆಮಾತುಗಳಲ್ಲಿ ಕಾಲಕಳೆಯದೆ, ಸರ್ವೇಶ್ವರ ಸ್ವಾಮಿಯ ಸಬ್ಬತ್‍ದಿನ ಪರಿಶುದ್ಧವಾದುದು, ಸಂತೋಷಕರವಾದುದು, ಮಾನ್ಯತೆಗೆ ಅರ್ಹವಾದುದು ಎಂದು ಸನ್ಮಾನಿಸಿದ್ದೇ ಆದರೆ</verse>
				<verse number="14">ನೀವು ಸರ್ವೇಶ್ವರ ಸ್ವಾಮಿಯಾದ ನನ್ನ ಆನಂದದಲ್ಲಿ ಭಾಗಿಗಳಾಗುವಿರಿ; ನಾನು ನಿಮ್ಮನ್ನು ಉನ್ನತಸ್ಥಾನಕ್ಕೆ ಏರಿಸುವೆನು. ನಿಮ್ಮ ಪಿತೃ ಯಕೋಬನ ಸೊತ್ತನ್ನು ನೀವು ನಿರಾತಂಕವಾಗಿ ಅನುಭವಿಸುವಂತೆ ಮಾಡುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.</verse>
			</chapter>
			<chapter number="59">
				<verse number="1">ನಾನು ಹೇಳುವುದನ್ನು ಕೇಳಿ: ಸರ್ವೇಶ್ವರ ಸ್ವಾಮಿಯ ಕೈ ನಿಮ್ಮನ್ನು ರಕ್ಷಿಸಲಾಗದಂಥ ಮೋಟುಗೈಯಲ್ಲ, ಅವರ ಕಿವಿ ಕಿವುಡಲ್ಲ.</verse>
				<verse number="2">ಬದಲಿಗೆ, ನಿಮ್ಮ ಅಪರಾಧಗಳೇ ನಿಮ್ಮನ್ನು ಜೀವದಿಂದ ಬೇರ್ಪಡಿಸುತ್ತಾ ಬಂದಿವೆ. ಅವರು ನಿಮಗೆ ಕಿವಿಗೊಡದಂತೆ ನಿಮ್ಮ ಪಾಪಗಳೇ ಅವರನ್ನು ವಿಮುಖರನ್ನಾಗಿ ಮಾಡಿವೆ.</verse>
				<verse number="3">ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾದುವು, ನಿಮ್ಮ ಬೆರಳುಗಳು ಅಕ್ರಮದಿಂದ ಮಲಿನವಾಗಿವೆ, ನಿಮ್ಮ ತುಟಿಗಳು ಸುಳ್ಳು ನುಡಿಯುತ್ತವೆ. ನಿಮ್ಮ ನಾಲಿಗೆ ಕೆಡುಕನ್ನು ಗೊಣಗುತ್ತದೆ.</verse>
				<verse number="4">ನ್ಯಾಯಸ್ಥಾನದಲ್ಲಿ ನ್ಯಾಯಾನುಸಾರ ವಾದಿಸುವವನು ಯಾರೂ ಇಲ್ಲ; ಸತ್ಯಾನುಸಾರ ತೀರ್ಪುಕೊಡುವವನು ಯಾರೂ ಇಲ್ಲ; ನೀವು ಶೂನ್ಯವಾದುದ್ದನ್ನೇ ನಂಬುತ್ತೀರಿ, ಅಬದ್ಧವಾದುದನ್ನೇ ಆಡುತ್ತೀರಿ, ಕೇಡನ್ನು ಬಸಿರಿಸಿ ಅಕ್ರಮವನ್ನು ಹೆರುತ್ತೀರಿ.</verse>
				<verse number="5">ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತೀರಿ, ಜೇಡರ ಹುಳುವಿನಂತೆ ಬಲೆಯನ್ನು ನೇಯುತ್ತೀರಿ. ಆ ಮೊಟ್ಟೆಗಳನ್ನು ತಿನ್ನುವವನು ಸಾಯುತ್ತಾನೆ, ಅವನ್ನು ಹೊಡೆದುಬಿಡುವವನು ವಿಷದ ಮರಿಗಳು ಹೊರಬರುವಂತೆ ಮಾಡುತ್ತಾನೆ.</verse>
				<verse number="6">ನಿಮ್ಮ ಆ ಬಲೆಯು ನೂಲು ಬಟ್ಟೆಯಾಗದು. ನೀವು ನೇಯ್ದದ್ದು ಹೊದಿಕೆಯಾಗದು. ನಿಮ್ಮ ಕಾರ್ಯಗಳು ಅಕ್ರಮವಾದುವು. ನಿಮ್ಮ ಕೈಕೆಲಸಗಳು ಹಿಂಸಾತ್ಮಕವಾದುವು.</verse>
				<verse number="7">ನಿಮ್ಮ ಕಾಲುಗಳು ಓಡುವುದು ಕೇಡಿಗಾಗಿ, ನೀವು ತವಕಪಡುವುದು ನಿರಪರಾಧಿಯ ರಕ್ತಪಾತಕ್ಕಾಗಿ. ನಿಮ್ಮ ಈ ಆಲೋಚನೆಗಳು ದುಷ್ಟವಾದುವು, ನೀವು ಹಿಡಿದ ಹಾದಿಗಳು ತರುವುದು ನಾಶವಿನಾಶವನ್ನೇ.</verse>
				<verse number="8">ಶಾಂತಿಸಮಾಧಾನದ ಮಾರ್ಗವನ್ನು ನೀವು ಅರಿಯಿರಿ. ನಿಮ್ಮ ನಡತೆಯಲ್ಲಿ ನ್ಯಾಯನೀತಿ ಎಂಬುದು ಇಲ್ಲ. ನಿಮ್ಮ ಮಾರ್ಗ ಅಂಕುಡೊಂಕಾಗಿದೆ, ಅವುಗಳಲ್ಲಿ ನಡೆಯುವವನು ಶಾಂತಿಸಮಾಧಾನವನ್ನು ಮುಟ್ಟನು.</verse>
				<verse number="9">ಆಗ ಜನರು ಹೀಗೆನ್ನುತ್ತಾರೆ: ಈ ಕಾರಣದಿಂದಲೇ ನ್ಯಾಯನಿರ್ಣಯವು ನಮ್ಮಿಂದ ದೂರವಾಗಿದೆ, ಸದ್ಧರ್ಮವು ನಮಗೆ ದೊರಕದೆ ಇದೆ. ಬೆಳಕಿಗಾಗಿ ಕಾದಿರುವ ನಮ್ಮನ್ನು ಕತ್ತಲು ಆವರಿಸಿದೆ. ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಮ್ಮನ್ನು ಅಂಧಕಾರವೇ ಬೆನ್ನಟ್ಟುತ್ತಿದೆ.</verse>
				<verse number="10">ಗೋಡೆಯನ್ನು ತಡವರಿಸುತ್ತೇವೆ ಕುರುಡರಂತೆ, ಹೌದು, ತಡಕಾಡುತ್ತೇವೆ ಕಣ್ಣಿಲ್ಲದವರಂತೆ. ನಡುಹಗಲಲ್ಲೇ ಎಡವುತ್ತೇವೆ ಇಳಿಹೊತ್ತಿನಲ್ಲೋ ಎಂಬಂತೆ. ಸಜೀವದಿಂದಿರುವವರ ನಡುವೆ ಇದ್ದೇವೆ ಸತ್ತವರಂತೆ.</verse>
				<verse number="11">ಗುರುಗುಟ್ಟುತ್ತೇವೆ ಕರಡಿಗಳಂತೆ, ಮುಲುಗುತ್ತೇವೆ ಪಾರಿವಾಳಗಳಂತೆ. ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಗದಿದೆ; ಜೀವೋದ್ಧಾರವನ್ನು, ನಿರೀಕ್ಷಿಸಿದರೂ ಅದು ನಮ್ಮಿಂದ ದೂರವಿದೆ.</verse>
				<verse number="12">“ಸರ್ವೇಶ್ವರಾ, ನಿಮಗೆ ವಿರುದ್ಧ ನಾವು ಗೈದ ಅಪರಾಧಗಳು ಹಲವು. ನಮ್ಮ ಪಾಪಗಳೇ ನಮಗೆ ವಿರೋಧವಾಗಿ ಸಾಕ್ಷಿಕೊಡುತ್ತವೆ. ನಮ್ಮ ಅಪರಾಧಗಳು ನಮ್ಮೊಡನೆಯೇ ಇವೆ. ನಮ್ಮ ದ್ರೋಹಗಳನ್ನು ನಾವು ಬಲ್ಲೆವು.</verse>
				<verse number="13">ಹೌದು, ನಿಮಗೆ ತಪ್ಪುಮಾಡಿ ನಿಮ್ಮನ್ನು ಅಲ್ಲಗಳೆದಿದ್ದೇವೆ. ನಮ್ಮ ದೇವರಾದ ನಿಮ್ಮನ್ನು ಹಿಂಬಾಲಿಸದೆ ಹಿಂದಿರುಗಿದ್ದೇವೆ; ಹಿಂಸಾಚಾರವನ್ನೂ ದಂಗೆ ಏಳುವುದನ್ನೂ ಪ್ರಚೋದಿಸಿದ್ದೇವೆ. ನಮ್ಮ ಅಂತರಾಲೋಚನೆಗಳು ಹುಸಿ; ನಮ್ಮ ಬಾಯಿಮಾತು ಸುಳ್ಳು.</verse>
				<verse number="14">ನ್ಯಾಯವನ್ನು ಓಡಿಸಿಬಿಟ್ಟಿದ್ದೇವೆ; ನೀತಿ ಸಮೀಪಿಸದಂತೆ ಮಾಡಿದ್ದೇವೆ. ಸತ್ಯವು ಸಾರ್ವಜನಿಕ ಚೌಕದಲ್ಲಿ ಬಿದ್ದುಹೋಗಿದೆ; ಸದಾಚಾರವು ಪ್ರವೇಶಿಸಲಾಗದಿದೆ.</verse>
				<verse number="15">ಸತ್ಯವು ಅದೃಶ್ಯವಾಗಿದೆ. ಕೇಡನ್ನು ಕೈಬಿಟ್ಟವನೇ ಖೂನಿಗೆ ಗುರಿಯಾಗುತ್ತಾನೆ.”</verse>
				<verse number="16">ಸರ್ವೇಶ್ವರ ಸ್ವಾಮಿ ಇದನ್ನು ನೋಡಿದ್ದಾರೆ. ನ್ಯಾಯವೇ ಇಲ್ಲದ್ದನ್ನು ಕಂಡು ಖಿನ್ನರಾಗಿದ್ದಾರೆ. ಮುಂದೆ ಬಂದು ಉದ್ಧಾರಮಾಡಬಲ್ಲ ವ್ಯಕ್ತಿ ಯಾರೂ ಇಲ್ಲದಿರುವುದನ್ನು ಅರಿತು ಸ್ತಬ್ಧರಾಗಿದ್ದಾರೆ. ಎಂತಲೇ, ಅವರು ಸ್ವಂತ ಶಕ್ತಿಯನ್ನು ಪ್ರಯೋಗಿಸಿ ಜಯಪ್ರದರಾಗುವರು. ನ್ಯಾಯನೀತಿಯೇ ಅವರಿಗೆ ಆಧಾರ.</verse>
				<verse number="17">ಅವರು ನ್ಯಾಯನೀತಿಯನ್ನು ವಜ್ರಕವಚವನ್ನಾಗಿ ತೊಟ್ಟುಕೊಳ್ಳುವರು. ರಕ್ಷಣೆ ಎಂಬ ಶಿರಸ್ತ್ರಾಣವನ್ನು ಧರಿಸಕೊಳ್ಳುವರು. ಪ್ರತೀಕಾರವೆಂಬ ಉಡುಪನ್ನು ಉಟ್ಟುಕೊಳ್ಳುವರು. ಆಗ್ರಹ ಎಂಬ ನಿಲುವಂಗಿಯನ್ನು ಹಾಕಿಕೊಳ್ಳುವರು.</verse>
				<verse number="18">ಅವರವರ ಕೃತ್ಯಗಳಿಗೆ ತಕ್ಕಂತೆ ದೂರದ ನಾಡುಗಳವರೆಗೂ ಮುಯ್ಯಿ ತೀರಿಸುವರು. ವಿರೋಧಿಗಳಿಗೆ ಪ್ರತೀಕಾರ ಎಸಗುವರು; ಶತ್ರುಗಳಿಗೆ ಸೇಡನ್ನು ತೀರಿಸುವರು.</verse>
				<verse number="19">ಪೂರ್ವದಿಂದ ಪಶ್ಚಿಮದವರೆಗೆ ಎಲ್ಲರೂ ಸರ್ವೇಶ್ವರ ಸ್ವಾಮಿಯ ನಾಮಕ್ಕೆ ಹೆದರುವರು. ಅವರ ಘನತೆಗೆ ಅಂಜುವರು. ರಭಸದಿಂದ ನುಗ್ಗುವ ಪ್ರವಾಹದಂತೆಯೂ ವೇಗವಾಗಿ ಬೀಸುವ ಗಾಳಿಯಂತೆಯೂ ಸರ್ವೇಶ್ವರ ಸ್ವಾಮಿ ಬಂದೇ ಬರುವರು.</verse>
				<verse number="20">ಸರ್ವೇಶ್ವರ ಸ್ವಾಮಿ ಜನರಿಗೆ ಹೀಗೆನ್ನುತ್ತಾರೆ: “ಸಿಯೋನಿಗೆ ಹಾಗೂ ಪಾಪವನ್ನು ತೊರೆದುಬಿಟ್ಟ ಯಕೋಬ್ಯರ ಬಳಿಗೆ ನಾನು ಉದ್ಧಾರಕನಾಗಿ ಬರುವೆನು.</verse>
				<verse number="21">ಅವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ: ನಿಮ್ಮ ಮೇಲೆ ನೆಲೆಸಿರುವ ನನ್ನ ಆತ್ಮವೂ ಮತ್ತು ನಿಮ್ಮ ಬಾಯಲ್ಲಿ ನಾನಿಟ್ಟಿರುವ ವಾಕ್ಯಗಳೂ ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ, ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ, ಇಂದಿನಿಂದ ಎಂದಿಗೂ ತೊಲಗುವುದಿಲ್ಲ.” ಇದು ಸರ್ವೇಶ್ವರ ಸ್ವಾಮಿಯ ನುಡಿ.</verse>
			</chapter>
			<chapter number="60">
				<verse number="1">ನಿನಗೆ ಬೆಳಕು ಬಂದಿದೆ ಜೆರುಸಲೇಮೇ, ಏಳು, ಪ್ರಕಾಶಿಸು; ನಿನ್ನ ಮೇಲೆ ಉದಯಿಸಿದೆ ಸರ್ವೇಶ್ವರನ ತೇಜಸ್ಸು.</verse>
				<verse number="2">ಇಗೋ ಜಗತ್ತನು ಮುತ್ತಿದೆ ಕತ್ತಲು ಜನಾಂಗಗಳನು ಆವರಿಸಿದೆ ಕಾರ್ಗತ್ತಲು. ನಿನ್ನ ಮೇಲಾದರೋ ಉದಯಿಸುವನು ಸರ್ವೇಶ್ವರನು ನಿನ್ನಲ್ಲಿ ಗೋಚರವಾಗುವುದು ಆತನಾ ತೇಜಸ್ಸು.</verse>
				<verse number="3">ರಾಷ್ಟ್ರಗಳು ಬರುವುವು ನಿನ್ನ ಬೆಳಕಿಗೆ ಅರಸರು ನಿನ್ನ ಉದಯದ ಶೋಭೆಗೆ.</verse>
				<verse number="4">ನೀ ನೋಡು ಸುತ್ತಮುತ್ತಲು ಕಣ್ಣೆತ್ತಿ ಬರುತಿಹರು ನಿನ್ನ ಮಕ್ಕಳೆಲ್ಲರು ಗುಂಪಾಗಿ. ದೂರದಿಂದ ಬರುತಿಹರು ಗಂಡುಮಕ್ಕಳು ಕಂಕುಳಿನಲ್ಲಿ ಹೊತ್ತ ಆ ಹೆಣ್ಣುಮಕ್ಕಳು.</verse>
				<verse number="5">ಇದನ್ನು ನೋಡಿ ನೀ ಬೆಳಗುವೆ ಕಾಂತಿಯಿಂದ ಉಬ್ಬುವುದು ನಿನ್ನ ಎದೆ ಆನಂದದಿಂದ. ಹರಿಯುವುದು ನಿನ್ನೆಡೆಗೆ ಸಮುದ್ರ ವ್ಯಾಪಾರ ಸಮೃದ್ಧಿ ದೊರಕುವುದು ನಿನಗೆ ಅನ್ಯಜನಾಂಗಗಳ ಆಸ್ತಿಪಾಸ್ತಿ.</verse>
				<verse number="6">ತುಂಬಿರುವುವು ನಿನ್ನೊಳು ಒಂಟೆಗಳ ಗುಂಪುಗಳು ಮಿದ್ಯಾನಿನ, ಏಫದ ಪ್ರಾಯದ ಒಂಟೆಗಳು. ಬರುವರೆಲ್ಲರು ಶೆಬದಿಂದ, ತರುವರು ಬಂಗಾರ, ಧೂಪಗಳನು ಸಾರುವರೆಲ್ಲರು ಸರ್ವೇಶ್ವರನ ಸ್ತುತ್ಯಕಾರ್ಯಗಳನು.</verse>
				<verse number="7">ನಿನ್ನಲ್ಲಿ ಕೂಡುವುವು ಕೇದಾರಿನ ಸಕಲ ಮಂದೆಗಳು ಬಲಿಯರ್ಪಣೆಗೊದಗುವುವು ನೆಬಾಯೋತಿನ ಟಗರುಗಳು. ಏರುವುವು ನನಗೆ ಸಮರ್ಪಕವಾದ ಹೋಮವಾಗಿ ಬಲಿಪೀಠವನು. ಚಂದಗೊಳಿಸುವೆನು ನನ್ನ ಸುಂದರವಾದ ಆಲಯವನು.</verse>
				<verse number="8">ಹಾರಿಬರುತ್ತಿರುವ ಇವರಾರು ಮೇಘಗಳಂತೆ? ಗೂಡುಗಳಿಗೆ ತ್ವರೆಮಾಡುವ ಪಾರಿವಾಳಗಳಂತೆ?</verse>
				<verse number="9">ನಿರೀಕ್ಷಿಸುತ್ತಿಹರು ನನ್ನನು ದೂರದ ನಿವಾಸಿಗಳು ಮುಂದಾಗಿ ಬರುತಿಹವು ತಾರ್ಷೀಷಿನ ಹಡಗುಗಳು, ನಿನ್ನ ದೇವರಾದ ಸರ್ವೇಶ್ವರನ ಶ್ರೀನಾಮ ನಿಧಿಯಾದ ಇಲ್ಲಿಗೆ; ನಿನ್ನ ಘನಪಡಿಸಿದ ಇಸ್ರಯೇಲಿನ ಪರಮಪಾವನನ ಸನ್ನಿಧಿಗೆ. ಹೊತ್ತು ತರುತಿಹರು ನಿನ್ನ ಮಕ್ಕಳನು ಜೊತೆಗೆ ಅವರ ಬೆಳ್ಳಿಬಂಗಾರಗಳನು.</verse>
				<verse number="10">ಕಟ್ಟುವರು ವಿದೇಶಿಯರು ನಿನ್ನ ಪೌಳಿಗೋಡೆಗಳನು ಅರಸರು ಕೂಡ ಸಲ್ಲಿಸುವರು ನಿನಗೆ ಸೇವೆಯನು. ಶಿಕ್ಷಿಸಿದೆ ನಿನ್ನನ್ನು ಕೋಪದಿಂದ ಆದರೆ, ಕರುಣಿಸುವೆನು ಕೃಪೆಯಿಂದ.</verse>
				<verse number="11">ತರುತ್ತಿಹರು ರಾಷ್ಟ್ರಗಳ ಆಸ್ತಿಯನ್ನು ನಿನ್ನಲ್ಲಿಗೆ ಬರುತಿಹರು ಅವುಗಳ ಅರಸರು ಮೆರವಣಿಗೆಯೊಂದಿಗೆ. ನಿನ್ನ ದ್ವಾರಗಳು ತೆರೆದಿರುವುವು ಹಗಲಿರುಳು ಮುಚ್ಚದೆ.</verse>
				<verse number="12">ನಾಶವಾಗುವುವು ನಿನ್ನ ಸೇವೆಮಾಡಲೊಲ್ಲದ ರಾಜ್ಯಗಳು, ಜನಾಂಗಗಳು; ಹೌದು, ಸಂಪೂರ್ಣವಾಗಿ ಹಾಳಾಗುವುವು ಆ ಜನಾಂಗಗಳು.</verse>
				<verse number="13">ಬರುವುದು ನಿನ್ನಲ್ಲಿಗೆ ಲೆಬನೋನಿನ ವೈಭವವು ಅದರ ತುರಾಯಿ, ಅಗಸೆ, ತಿಲಕ ಈ ಮರಗಳಾವುವು. ಅಲಂಕರಿಸುವುವು ನನ್ನ ಪವಿತ್ರಾಲಯವನು ಮಹಿಮೆಪಡಿಸುವೆನು ನನ್ನ ಪಾದಪೀಠದ ಮಂದಿರವನು.</verse>
				<verse number="14">ನಿನ್ನ ತುಳಿದವರ ಸಂತಾನ ಬರುವುದು ನಿನ್ನ ಬಳಿಗೆ ತಲೆಬಾಗಿ ನಿನ್ನ ಬೇಡವೆಂದವರು ಬೀಳುವರು ಕಾಲಿಗೆ ಸಾಷ್ಟಾಂಗವಾಗಿ. ಹೊಗಳುವರು ‘ನೀನೇ ಸರ್ವೇಶ್ವರನ ನಗರವೆಂದು, ಇಸ್ರಯೇಲಿನ ಪರಮಪಾವನ ಸಿಯೋನ್’ ಎಂದು.</verse>
				<verse number="15">ಪರಿತ್ಯಕ್ತಳೂ ದ್ವೇಷಿತಳೂ ಆದ ನಿರ್ಜನ ನಗರಿಯೇ, ನಿತ್ಯಘನತೆಯನು, ಶಾಶ್ವತ ಸಂತೋಷವನು ನೀಡುವೆ ನಿನಗೆ.</verse>
				<verse number="16">ಮೊಲೆಯೂಡಿಸುವರು ಜನಾಧಿಪತಿಗಳು ನಿನಗೆ ಮೊಲೆಗೂಸಾಗುವೆ ನೀನು ಜನಾಂಗಗಳಿಗೆ. ಆಗ ತಿಳಿಯುವೆ ನಿನ್ನನುದ್ಧರಿಸಿದ ಸರ್ವೇಶ್ವರ ನಾನೆಂದು ನಿನ್ನ ವಿಮೋಚಕನು, ಯಕೋಬ್ಯರ ಪರಾಕ್ರಮಿಯು ನಾನೆಂದು.</verse>
				<verse number="17">ಒದಗಿಸುವೆ ನಿನಗೆ ಮರವಿದ್ದಲ್ಲಿ ತಾಮ್ರವನು ಹಿತ್ತಾಳೆಗೆ ಬದಲಾಗಿ ಬಂಗಾರವನು ಕಬ್ಬಿಣಕ್ಕೆ ಪ್ರತಿಯಾಗಿ ಬೆಳ್ಳಿಯನು ಕಲ್ಲುಗಳ ಸ್ಥಾನದಲ್ಲಿ ಕಬ್ಬಿಣವನು ಮಾಡುವೆ ಶಾಂತಿಯನ್ನೇ ನಿನಗೆ ಅಧಿಪತಿಯನ್ನಾಗಿ ಸದ್ಧರ್ಮವನ್ನೇ ನಿನಗೆ ಅಧಿಕಾರಿಯನ್ನಾಗಿ.</verse>
				<verse number="18">ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು ನಿನ್ನ ದೇಶದಲಿ ನಾಶವಿನಾಶಗಳ ವಾರ್ತೆಯೇ ಕೇಳಿಬರದು ನಿನ್ನ ಪ್ರಾಂತ್ಯಗಳಲಿ. ಆಗ ಹೆಸರಿಡುವೆ ನಿನ್ನ ಪೌಳಿಗೋಡೆಗೆ ‘ದೈವಮುಕ್ತಿ’ ಎಂದು ನಿನ್ನೀ ಪುರದ್ವಾರಗಳಿಗೆ “ದೈವಸ್ತುತಿ’ ಎಂದು.</verse>
				<verse number="19">ನಿನಗಿನ್ನು ಬೇಕಾಗಿಲ್ಲ ಸೂರ್ಯನ ಬೆಳಕು ಹಗಲೊಳು ನಿನಗೆಂದಿಗೂ ಬೇಕಾಗಿಲ್ಲ ಚಂದ್ರನ ಬೆಳಕು ಇರುಳೊಳು. ನಿನಗೆ ನಿತ್ಯಪ್ರಕಾಶ ಸರ್ವೇಶ್ವರನೆ, ನಿನ್ನ ಬೆಳಗುವ ತೇಜಸ್ಸು ನಿನ್ನ ದೇವನೆ.</verse>
				<verse number="20">ನಿನ್ನ ಸೂರ್ಯನು ಇನ್ನು ತೊಲಗನು. ನಿನ್ನ ಚಂದ್ರನು ಬಿಟ್ಟು ತೊಲಗನು. ಸರ್ವೇಶ್ವರನೇ ನಿನಗೆ ನಿತ್ಯಜ್ಯೋತಿ ನಿನ್ನ ದುಃಖ ದಿನಗಳಿಗಿದೆ ಸಮಾಪ್ತಿ.</verse>
				<verse number="21">ಸದ್ಧರ್ಮಿಗಳಾಗಿರುವರು ನಿನ್ನ ಜನರೆಲ್ಲರು ಆಗುವರವರು ನಾಡಿಗೆ ಶಾಶ್ವತ ಬಾಧ್ಯಸ್ಥರು ನನ್ನ ಮಹಿಮೆಗಾಗಿ ನಾ ನೆಟ್ಟ ಸಸಿಗಳವರು ನನ್ನ ಕೈಗಳು ಸೃಷ್ಟಿಸಿದ ಪ್ರಜೆಗಳವರು.</verse>
				<verse number="22">ದೊಡ್ಡ ಕುಲವಾಗಿಸುವೆನು ಚಿಕ್ಕವನಿಂದ ಬಲಿಷ್ಠ ರಾಷ್ಟ್ರವಾಗಿಸುವೆನು ದುರ್ಬಲನಿಂದ. ಸಾಧಿಸುವೆನು ಇದನು ಕ್ಲುಪ್ತಕಾಲದೊಳು ಸರ್ವೇಶ್ವರನಾದ ನಾನು, ಶೀಘ್ರದೊಳು.</verse>
			</chapter>
			<chapter number="61">
				<verse number="1">ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ: ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,</verse>
				<verse number="2">ಸರ್ವೇಶ್ವರ ಸ್ವಾಮಿಯ ಅನುಗ್ರಹದ ವರುಷವನು, ನಮ್ಮ ದೇವರು ಮುಯ್ಯಿತೀರಿಸುವಾ ದಿನವನು ಘೋಷಿಸಲೆಂದೆ.</verse>
				<verse number="3">ದುಃಖಿತರೆಲ್ಲರಿಗೆ ಸಾಂತ್ವನ ಸಾರಲೆಂದೇ ಕಳುಹಿಸಿದನಾತ ನನ್ನನು. ಸಿಯೋನಿನ ಶೋಕಾರ್ತರಿಗೆ ಬರಿಬೂದಿಗೆ ಬದಲು ಶಿರೋಭೂಷಣ, ದುಃಖತಾಪದ ಬದಲು ಆನಂದ ತೈಲ, ಸೊರಗಿದ್ದ ಮನಕೆ ಮೆಚ್ಚಿಕೆಯ ಮೇಲ್ವಸ್ತ್ರ ಒದಗಿಸಲೆಂದೇ ನನ್ನನ್ನು ಕಳುಹಿಸಿದನಾತ. ನೆಟ್ಟಿಹನು ಇವರನು ಸರ್ವೇಶ್ವರ ತನ್ನ ಮಹಿಮೆಯಾಗಿ ಹೆಸರ ಪಡೆವರಿವರು ‘ನೀತಿವೃಕ್ಷ’ಗಳೆಂಬುದಾಗಿ.</verse>
				<verse number="4">ಮರಳಿ ಕಟ್ಟುವರಿವರು ಪಾಳುಬಿದ್ದ ಪುರಾತನ ಮನೆಗಳನು ಮತ್ತೆ ಎಬ್ಬಿಸುವರು ಬಿದ್ದ ಹಳೆಯ ಕಟ್ಟಡಗಳನು ನೂತನಗೊಳಿಸುವರು ತಲಾಂತರದ ಹಾಳುಬೀಳು ಪಟ್ಟಣಗಳನು.</verse>
				<verse number="5">ವಿದೇಶಿಯರು, ಮಂದೆ ಕಾವಲುಗಾರರಾಗುವರು ನಿಮಗೆ ಅನ್ಯ ಜನರು ಉಳುವವರೂ ತೋಟಗಾರರಾಗುವರೂ ನಿಮಗೆ.</verse>
				<verse number="6">“ಸರ್ವೇಶ್ವರನ ಯಾಜಕರು’ ಎಂಬ ಬಿರುದು ನಿಮ್ಮದಾಗುವುದು “ನಮ್ಮ ದೇವರ ಪರಿಚಾರಕರು” ಎಂಬ ಹೆಸರು ನಿಮಗೆ ಬರುವುದು. ಅನುಭವಿಸುವಿರಿ ಅನ್ಯರಾಷ್ಟ್ರಗಳ ಸಂಪತ್ತನ್ನು ಹೆಮ್ಮೆಪಡುವಿರಿ ಆ ಸಿರಿ ನಿಮ್ಮದಾಯಿತೆಂದು.</verse>
				<verse number="7">ಸಿಗುವುದು ನಿಮಗಾದ ಅವಮಾನಕೆ ಇಮ್ಮಡಿ ಹಿರಿತನ ಆದ ತಿರಸ್ಕಾರಕೆ ಪ್ರತಿಯಾಗಿ ಸಂತಸ ಸಿರಿತನ. ದ್ವಿಗುಣವಾಗುವುದು ನಿಮಗೆ ನಾಡಿನ ಸಂಪದ ಅನಂತಕಾಲಕ್ಕು ನಿಮಗಿರುವುದು ಆನಂದ.</verse>
				<verse number="8">“ಸರ್ವೇಶ್ವರ ಆದ ನಾನು ನ್ಯಾಯಪ್ರಿಯ. ಸುಲಿಗೆ ಅನ್ಯಾಯ, ನನಗೆ ಅಸಹ್ಯ. ಪ್ರಾಮಾಣಿಕವಾಗಿ ನೀಡುವೆನು ಇವರಿಗೆ ಪ್ರತಿಫಲ ಮಾಡಿಕೊಳ್ಳುವೆನು ಇವರೊಡನೆ ಅಳಿಯದ ಒಪ್ಪಂದ.</verse>
				<verse number="9">ಪ್ರಖ್ಯಾತವಾಗುವುದು ಇವರ ಸಂತಾನ ವಿಶ್ವದಲ್ಲೆಲ್ಲ ಹೆಸರುವಾಸಿಯಾಗುವುದು ಇವರ ಸಂತತಿ ಅನ್ಯರಾಷ್ಟ್ರಗಳಲ್ಲೆಲ್ಲ. ಲಭಿಸುವುದು ಸರ್ವೇಶ್ವರನ ಆಶೀರ್ವಾದ ಈ ಜನತೆಗೆ ಖಚಿತವಾಗುವುದಿದು ನೋಡುವವರೆಲ್ಲರಿಗೆ.”</verse>
				<verse number="10">ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.</verse>
				<verse number="11">ಬುವಿಯು ತನ್ನಿಂದ ಬೀಜವನು ಮೊಳೆಯಿಸುವಂತೆ ತೋಟವು ತನ್ನೊಳು ಸಸಿಯನು ಬೆಳೆಸುವಂತೆ ಸ್ವಾಮಿ ಸರ್ವೇಶ್ವರ, ಸಮಸ್ತ ರಾಷ್ಟ್ರಗಳ ಮುಂದೆ ವೃದ್ಧಿಗೊಳಿಸುವನು ಸದ್ಧರ್ಮವನೆ, ಸ್ತುತಿಸ್ತೋತ್ರವನೆ.</verse>
			</chapter>
			<chapter number="62">
				<verse number="1">ಸಿಯೋನಿನ ಸದ್ಧರ್ಮವು ಪ್ರಕಾಶಗೊಳ್ಳುವತನಕ ಜೆರುಸಲೇಮಿನ ಉದ್ಧಾರ ದೀಪವು ಬೆಳಗುವತನಕ ಸುಮ್ಮನಿರೆನು ನಾನು ಸಿಯೋನಿನ ಹಿತವನ್ನು ಲಕ್ಷಿಸದೆ, ಮೌನವಿರೆನು ಜೆರುಸಲೇಮಿನ ಸುಕ್ಷೇಮವನು ಚಿಂತಿಸದೆ.</verse>
				<verse number="2">ನೋಡುವರು ಜನಾಂಗಗಳು ನಿನ್ನ ಸದ್ಧರ್ಮವನು ಕಾಣುವರು ಸಕಲ ರಾಜರು ನಿನ್ನ ವೈಭವವನು ಪಡೆಯುವೆ ನೀನು ಸರ್ವೇಶ್ವರನೇ ಕೊಟ್ಟ ಹೊಸ ಹೆಸರನು.</verse>
				<verse number="3">ಸರ್ವೇಶ್ವರನ ಕೈಯಲ್ಲಿ ನೀನು ಸುಂದರ ಕಿರೀಟವಾಗಿ ಮೆರೆಯುವೆ ನಿನ್ನ ದೇವರ ಹಸ್ತದಲ್ಲಿ ರಾಜ ಮುಕುಟವಾಗಿ;</verse>
				<verse number="4">“ಎನ್ನ ಮನದನ್ನೆ” ಎನಿಸಿಕೊಳ್ಳುವೆ ನೀನು “ಸುವಿವಾಹಿತೆ” ಎನಿಸಿಕೊಳ್ಳುವುದು ನಿನ್ನ ನಾಡು. ನಿನ್ನಲ್ಲಿದೆ ಉಲ್ಲಾಸ ಸರ್ವೇಶ್ವರನಿಗೆ ವಿವಾಹವಾಗುವುದಿದೆ ನಿನ್ನ ನಾಡಿಗೆ.</verse>
				<verse number="5">ಯುವಕನು ಕನ್ಯೆಯುವತಿಯನು ವರಿಸುವಂತೆ ವರಿಸುವನು ಸೃಷ್ಟಿಕರ್ತನು ನಿನ್ನನು. ವರನು ವಧುವಿನಲಿ ಆನಂದಿಸುವಂತೆ ನಿನ್ನಲಿ ಆನಂದಿಸುವನು ನಿನ್ನ ದೇವನು.</verse>
				<verse number="6">ಜೆರುಸಲೇಮ್, ಕಾವಲಿಟ್ಟಿರುವೆ ನಿನ್ನ ಗೋಡೆ ಸುತ್ತಲು ಮೌನವಿರಕೂಡದು ಆ ಕಾವಲಿಗರು ಹಗಲಿರುಳು.</verse>
				<verse number="7">ಜೆರುಸಲೇಮನ್ನು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವತನಕ ನೆನಪಿಸುತ್ತಿರಬೇಕು ಭದ್ರಪಡಿಸಿ ಲೋಕಪ್ರಸಿದ್ಧಿಗೆ ತರುವತನಕ ನಿಮಗಿರದಿರಲಿ ವಿಶ್ರಾಂತಿ, ಆತನಿಗೂ ಕೊಡದಿರಿ ವಿರಾಮ.</verse>
				<verse number="8">ತನ್ನ ಬಲಗೈ ಮೇಲೆ, ಭುಜಬಲದ ಮೇಲೆ ಸರ್ವೇಶ್ವರನಿಟ್ಟ ಆಣೆ: “ಕೊಡೆನಿನ್ನು ನಿನ್ನ ದವಸಧಾನ್ಯವನು ಶತ್ರುಗಳ ಆಹಾರಕ್ಕೆ ನಿನ್ನ ದುಡಿಮೆಯ ದ್ರಾಕ್ಷಾರಸವನು ಅನ್ಯಜನರು ಕುಡಿಯಲಿಕ್ಕೆ.</verse>
				<verse number="9">ಬೆಳೆಮಾಡಿದವರೇ ಕಾಳನು ತಿಂದು ಸ್ತುತಿಸುವರು ಸರ್ವೇಶ್ವರನನು; ದ್ರಾಕ್ಷಿ ಕಿತ್ತವರೇ ಕುಡಿವರು ಈ ರಸವನು ನನ್ನಾಲಯದ ಅಂಗಳದೊಳು.”</verse>
				<verse number="10">ಹೊರಟುಬನ್ನಿ, ಹಾದುಬನ್ನಿ, ಪುರದ್ವಾರವನು ಬರಲಿರುವ ಜನರಿಗೆ ಸರಿಮಾಡಿರಿ ಹಾದಿಯನು ಎತ್ತರಿಸಿ ಹೆದ್ದಾರಿಯನು, ತೆಗೆದುಹಾಕಿ ಕಲ್ಲುಗಳನು ಹಾರಿಸಿ ಧ್ವಜವನು, ನೀಡಿ ರಾಷ್ಟ್ರಗಳಿಗೆ ಸೂಚನೆಯನು.</verse>
				<verse number="11">ಇಗೋ, ಸಮೀಪಿಸುತ್ತಿದೆ ನೀವು ಮುಕ್ತಿಹೊಂದುವದಿನ ಆತನೊಂದಿಗಿದೆ ಆತ ನೀಡುವ ಬಹುಮಾನ ಆತನ ಮುಂದಿದೆ ಆತ ಗಳಿಸಿದ ವರಮಾನ. ಇದನು ತಿಳಿಯಹೇಳಿರಿ ಸಿಯೋನೆಂಬಾಕೆಗೆ ಸರ್ವೇಶ್ವರನ ಆಜ್ಞೆಯಿದು ಜಗದ ದಿಗಂತದವರೆಗೆ.</verse>
				<verse number="12">‘ಪವಿತ್ರ ಪ್ರಜೆ’ ಎನಿಸಿಕೊಳ್ಳುವುದು ನಿಮ್ಮ ಜನತೆ ‘ಸರ್ವೇಶ್ವರ ಸ್ವಾಮಿಯೇ ಉದ್ಧರಿಸಿದ ಜನತೆ’. ನಿನ್ನ ಹೆಸರೋ, ‘ಪ್ರಾಪ್ತ ನಗರಿ’ ಪತಿ ವರಿಸಿ ಕೈ ಬಿಡದ ಪುರಿ.</verse>
			</chapter>
			<chapter number="63">
				<verse number="1">“ಎದೋಮಿನ ಬೊಚ್ರನಗರದಿಂದ ಬರುವ ಈತನು ಯಾರು? ರಕ್ತಗೆಂಪಾದ ಉಡುಪನ್ನುಟ್ಟು ಥಳಥಳಿಸುವ ವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯದಿಂದ ಮೆರೆಯುತ್ತಾ ನಡೆದುಬರುವ ಈತನು ಯಾರು? “ಆತನು ನಾನೇ, ಸತ್ಯವನು ಘೋಷಿಸುವವನು, ಆತನು ನಾನೇ, ಉದ್ಧರಿಸಲು ಸಮರ್ಥನು\.</verse>
				<verse number="2">ನಿನ್ನ ಉಡುಪೇತಕೆ ಕೆಂಪಗಿದೆ? ನಿನ್ನ ಬಟ್ಟೆಗಳೇಕೆ ದ್ರಾಕ್ಷೆಯನು ತುಳಿಯುವವನ ಬಟ್ಟೆಯ ಹಾಗಿದೆ?</verse>
				<verse number="3">“ದ್ರಾಕ್ಷಿಹಣ್ಣನು ತುಳಿವಂತೆ ತುಳಿದಿದ್ದೇನೆ ರಾಷ್ಟ್ರಗಳನು ಒಬ್ಬಂಟಿಗನಾಗೇ ಯಾರು ಇರಲಿಲ್ಲ ನನಗೆ ಸಹಾಯಕ್ಕೆ. ಅವರನ್ನು ತುಳಿದೆ ಕೋಪದಿಂದ ರೋಷಾವೇಶದಿಂದ ಹೊಸಕಿದೆ ಕಾಲಿನಿಂದ. ಅವರ ರಕ್ತ ನನ್ನ ಬಟ್ಟೆಗಳ ಮೇಲೆ ಸಿಡಿದಿದೆ. ನನ್ನ ಉಡುಪಿಗೆಲ್ಲಾ ಆ ಬಿಸಿರಕ್ತ ಮೆತ್ತಿಕೊಂಡಿದೆ.</verse>
				<verse number="4">ಏಕೆಂದರೆ, ನನ್ನ ಜನರನು ಉದ್ಧರಿಸುವ ವರುಷವು ಬಂದಿತ್ತು ಮುಯ್ಯಿತೀರಿಸುವ ದಿನವು ನನ್ನ ಮನದಲ್ಲಿ ನಿಶ್ಚಿತವಾಗಿತ್ತು.</verse>
				<verse number="5">ಸುತ್ತಲು ನೋಡಿದೆ, ಯಾರು ಇರಲಿಲ್ಲ ಸಹಾಯಮಾಡಲು ನನಗೆ ಒತ್ತಾಸೆಗೆ ಒಬ್ಬನೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆ. ಆಗ ನನ್ನ ಭುಜಬಲವೇ ಜಯಕ್ಕೆ ಅಡಿಪಾಯವಾಯಿತು.</verse>
				<verse number="6">ರಾಷ್ಟ್ರಗಳನು ತುಳಿದೆ ಕುಪಿತನಾಗಿ ಅವುಗಳನು ನುಚ್ಚುನೂರುಮಾಡಿದೆ ರೋಷಾವಿಷ್ಟನಾಗಿ ಅವುಗಳ ರಕ್ತವನು ನೆಲದಲಿ ಹರಿಸಿದೆ ಪ್ರವಾಹವಾಗಿ.</verse>
				<verse number="7">ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.</verse>
				<verse number="8">“ನಿಜವಾಗಿ ಇವರು ನನ್ನ ಜನ, ನನ್ನ ಮಕ್ಕಳು, ನನಗೆ ಮೋಸಮಾಡರು,” ಎಂದುಕೊಂಡರು ಸರ್ವೇಶ್ವರ ಸ್ವಾಮಿ.</verse>
				<verse number="9">ಆ ಜನರ ಕಷ್ಟದುಃಖಗಳಲ್ಲಿ ಸಂರಕ್ಷಿಸಿದರು. ದಯೆಯಿಂದಲೂ ಪ್ರೀತಿಯಿಂದಲೂ ಅವರಿಗೆ ಬಿಡುಗಡೆ ನೀಡಿದರು. ಪುರಾತನ ಕಾಲದಲ್ಲೆಲ್ಲಾ ಅವರನ್ನು ಎತ್ತಿ ಹೊತ್ತು ಆದರಿಸಿದರು.</verse>
				<verse number="10">ಅವರಾದರೋ ಬಂಡಾಯವೆದ್ದರು; ಸ್ವಾಮಿಯ ಪವಿತ್ರಾತ್ಮನನ್ನು ದುಃಖಪಡಿಸಿದರು. ಎಂತಲೇ ಸರ್ವೇಶ್ವರ ಅವರಿಗೆ ಶತ್ರುವಾಗಿ ಮಾರ್ಪಟ್ಟರು, ತಾವೇ ಅವರಿಗೆ ವಿರುದ್ಧವಾಗಿ ಹೋರಾಡಿದರು.</verse>
				<verse number="11">ಆಗ ಆ ಜನರು ಪುರಾತನ ಮೋಶೆಯ ಕಾಲವನ್ನು ನೆನಪಿಗೆ ತಂದುಕೊಂಡು ಹೀಗೆಂದರು: “ತನ್ನ ಜನರೆಂಬ ಮಂದೆಯನ್ನು, ಅದರ ಕುರುಬನ ಸಮೇತ ಸಮುದ್ರದಿಂದ ಸುರಕ್ಷಿತವಾಗಿ ಬರಮಾಡಿದ ಸ್ವಾಮಿ ಎಲ್ಲಿ? ಆ ಜನರಿಗೆ ತಮ್ಮ ಪವಿತ್ರಾತ್ಮನನ್ನು ಪ್ರದಾನಮಾಡಿದ ಸ್ವಾಮಿ ಎಲ್ಲಿ?</verse>
				<verse number="12">ಮೋಶೆಯ ಬಲಗೈಗೆ ತಮ್ಮ ಮಹಿಮಾ ಭುಜಬಲವನ್ನು ನೀಡಿದ ಸ್ವಾಮಿ ಎಲ್ಲಿ? ಆತನ ಕೈಯಿಂದ ಜಲರಾಶಿಯನ್ನು ಆ ಜನರ ಕಣ್ಮುಂದೆ ಇಬ್ಬಾಗಿಸಿದ ಸ್ವಾಮಿ ಎಲ್ಲಿ? ಹೀಗೆ ತಮ್ಮ ಹೆಸರನ್ನು ಶಾಶ್ವತವಾಗಿಸಿಕೊಂಡ ಸ್ವಾಮಿ ಎಲ್ಲಿ?</verse>
				<verse number="13">ಬಯಲಿನಲ್ಲಿ ಸರಾಗವಾಗಿ ನಡೆವ ಕುದುರೆಯಂತೆ ಆ ಜನರನ್ನು ಜಲದ ಮೇಲೆ ನಡೆಸಿದ ಸ್ವಾಮಿ ಎಲ್ಲಿ?</verse>
				<verse number="14">ತಪ್ಪಲಿಗೆ ಇಳಿದ ದನಕರುಗಳಂತೆ ಆ ಜನರನ್ನು ಕರೆತಂದಿತು ಸ್ವಾಮಿಯ ಆತ್ಮ ಶಾಂತಿ ನಿಲಯಕೆ. ಹೀಗೆ, ಆ ಜನರಿಗೆ ಮಾರ್ಗದರ್ಶಕರಾಗಿ ತಮ್ಮ ನಾಮವನ್ನು ಘನಪಡಿಸಿಕೊಂಡರು ಸ್ವಾಮಿ.</verse>
				<verse number="15">ಸ್ವಾಮಿ ಸರ್ವೇಶ್ವರಾ, ಆಕಾಶದಿಂದ ನಮ್ಮನು ಈಕ್ಷಿಸಿನೋಡಿ; ಪರಿಶುದ್ಧವೂ ಪೂಜ್ಯವೂ ಆದ ನಿಮ್ಮ ನಿವಾಸದಿಂದ ವೀಕ್ಷಿಸಿನೋಡಿ. ನಿಮ್ಮ ಹುರುಪು ಉತ್ಸಾಹವೆಲ್ಲಿ? ನಿಮ್ಮ ಸಾಹಸಕಾರ್ಯಗಳು ಏನಾದುವು? ನಮ್ಮಿಂದ ಬಿಗಿಹಿಡಿದಿರುವಿರಾ ನಿಮ್ಮ ಕನಿಕರವನು? ನಿಮ್ಮ ಕರುಳ ಕರೆಯನು?</verse>
				<verse number="16">ನೀವೇ ನಮ್ಮ ತಂದೆ. ಅಬ್ರಹಾಮನು ನಮ್ಮನ್ನು ಅರಿಯದೆ ಇರಬಹುದು, ಇಸ್ರಯೇಲನು ನಮ್ಮನ್ನು ಗುರುತಿಸದೆ ಇರಬಹುದು, ಆದರೆ ಸರ್ವೇಶ್ವರಾ, ನೀವೇ ನಮ್ಮ ತಂದೆ, ನಮ್ಮ ಉದ್ಧಾರಕ; ಆದಿಯಿಂದ ಇರಲು ಅದುವೇ ನಿಮ್ಮ ನಾಮಾಂಕಿತ.</verse>
				<verse number="17">ಸ್ವಾಮೀ, ನಾವು ನಿಮ್ಮ ಮಾರ್ಗ ತಪ್ಪಿ ಅಲೆಯುವಂತೆ ಮಾಡುತ್ತೀರಿ, ಏಕೆ? ನಿಮಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿಣಪಡಿಸುವುದು ಏಕೆ? ನಿಮ್ಮ ಶರಣರ ನಿಮಿತ್ತ, ನಿಮಗೆ ಬಾಧ್ಯರಾದ ಕುಲಗಳ ನಿಮಿತ್ತ, ನಮಗೆ ಪ್ರಸನ್ನಚಿತ್ತರಾಗಿರಿ.</verse>
				<verse number="18">ನಿಮ್ಮ ಸ್ವಕೀಯ ಜನರು ಸ್ವಲ್ಪಕಾಲ ಮಾತ್ರ ಅನುಭವಿಸಿದಾ ನಿಮ್ಮ ಪವಿತ್ರ ಗರ್ಭಗುಡಿಯನ್ನು ನಮ್ಮ ವೈರಿಗಳು ತುಳಿದು ಹಾಳುಮಾಡಿದರಲ್ಲಾ!</verse>
				<verse number="19">ನಾವಾದರೋ, ನಿಮ್ಮ ದೊರೆತನಕ್ಕೆ ಎಂದಿಗೂ ಒಳಗಾಗದ, ನಿಮ್ಮ ನಾಮವನ್ನು ಧರಿಸದ, ಪರಕೀಯರಂತೆ ಆಗಿದ್ದೇವಲ್ಲಾ!</verse>
			</chapter>
			<chapter number="64">
				<verse number="1">(ಸ್ವಾಮೀ) ಆಕಾಶವನ್ನು ಸೀಳಿ ಇಳಿದು ಬರಲಾರಿರಾ? ನಿಮ್ಮ ದರ್ಶನವನ್ನು ಕಂಡು ಬೆಟ್ಟಗುಡ್ಡಗಳು ಗಡಗಡನೆ ನಡುಗಬಾರದೆ?</verse>
				<verse number="2">ಒಣಗಿಡಕ್ಕೆ ಹಚ್ಚುವ ಕಿಚ್ಚಿನಂತೆ, ನೀರನ್ನು ಕುದಿಸುವ ಬೆಂಕಿಯಂತೆ ನೀವು ಪ್ರತ್ಯಕ್ಷರಾಗಲಾರಿರಾ?</verse>
				<verse number="3">ನಮ್ಮ ನಿರೀಕ್ಷೆಗೆ ಮೀರಿದ ಮಹತ್ಕಾರ್ಯಗಳನ್ನು ನಡೆಸಿ, ನಿಮ್ಮ ನಾಮಮಹಿಮೆಯನ್ನು ನಿಮ್ಮ ಶತ್ರುಗಳಿಗೆ ಪ್ರದರ್ಶಿಸಿ, ಅನ್ಯರಾಷ್ಟ್ರಗಳನ್ನು ನಡುಗಿಸಲಾರಿರಾ? ಹೌದು, ನೀವು ಇಳಿದುಬಂದು, ಬೆಟ್ಟಗುಡ್ಡಗಳು ನಡುಗಿದರೆ ಎಷ್ಟೋ ಲೇಸು.</verse>
				<verse number="4">ತಮ್ಮನ್ನು ಕಾದು ಎದುರುನೋಡುವವರ ಪರವಾಗಿ ಕಾರ್ಯಗತರಾಗುವಂಥ ದೇವರು, ನಿಮ್ಮನ್ನು ಬಿಟ್ಟರೆ, ಯಾರಿದ್ದಾರೆ? ಅಂಥಾ ದೇವರನ್ನು ಲೋಕಾದಿಯಿಂದ ಯಾರೂ ಕಂಡಿಲ್ಲ, ಅಂಥವರು ಯಾರ ಕಿವಿಗೂ ಬೀಳಲಿಲ್ಲ, ಯಾವ ಕಣ್ಣಿಗೂ ಕಾಣಿಸಲಿಲ್ಲ.</verse>
				<verse number="5">ಸದಾಚಾರದಲ್ಲೇ ಸಂತೋಷಪಡುತ್ತಾ, ನಿಮ್ಮ ಮಾರ್ಗದಲ್ಲಿ ನಡೆಯುತ್ತಾ, ನಿಮ್ಮನ್ನು ಸ್ಮರಿಸುತ್ತಾ ಬಂದವರಿಗೆ ಪ್ರತ್ಯಕ್ಷರಾಗುತ್ತೀರಿ. ನಮ್ಮ ಮೇಲಾದರೋ ಕೋಪಗೊಂಡಿರಿ. ಆದರೂ ನಾವು ಪಾಪದಲ್ಲೇ ಮುನ್ನಡೆದೆವು. ಬಹುಕಾಲದಿಂದ ಪಾಪದಲ್ಲಿ ಮುಳುಗಿಹೋದೆವು. ನಮ್ಮಂಥವರಿಗೆ ರಕ್ಷಣೆ ಇದೆಯೇ?</verse>
				<verse number="6">ನಾವೆಲ್ಲರೂ ಅಶುದ್ಧರು, ನಮ್ಮ ಸತ್ಕಾರ್ಯಗಳೆಲ್ಲ ಕೊಳಕು, ತರಗೆಲೆಯಂತೆ ಒಣಗಿಹೋಗಿದ್ದೇವೆ. ಬಿರುಗಾಳಿಯಂತೆ ನಮ್ಮನ್ನು ತಳ್ಳಿಕೊಂಡು ಬಂದಿವೆ, ನಮ್ಮ ಅಪರಾಧಗಳು.</verse>
				<verse number="7">ನಿಮ್ಮ ನಾಮಸ್ಮರಣೆ ಮಾಡುವವನು ಯಾರೂ ಇಲ್ಲ. ನಿಮ್ಮ ಆಶ್ರಯ ಕೋರುವ ಆಸಕ್ತನು ಎಲ್ಲಿಯೂ ಇಲ್ಲ. ಏಕೆಂದರೆ ನೀವು ನಮಗೆ ವಿಮುಖರಾಗಿದ್ದೀರಿ. ನಮ್ಮ ಪಾಪಗಳ ವಶಕ್ಕೆ ನಮ್ಮನ್ನು ಬಿಟ್ಟುಬಿಟ್ಟಿದ್ದೀರಿ.</verse>
				<verse number="8">ಆದರೂ ಸ್ವಾಮಿ ಸರ್ವೇಶ್ವರಾ, ನೀವು ನಮ್ಮ ತಂದೇ. ನಾವು ಜೇಡಿಮಣ್ಣು, ನೀವೇ ಕುಂಬಾರ; ನಾವೆಲ್ಲರು ನಿಮ್ಮ ಕೈಯ ಕೃತಿಗಳು.</verse>
				<verse number="9">ಸ್ವಾಮಿ, ನಮ್ಮ ಮೇಲೆ ಅತಿಕೋಪಗೊಳ್ಳದಿರಿ. ಸದಾ ನಮ್ಮ ಅಕ್ರಮಗಳನ್ನು ನೆನೆಸದಿರಿ, ಇಗೋ ನೋಡಿ, ಬೇಡುತ್ತಿದ್ದೇವೆ, ನಾವೆಲ್ಲರೂ ನಿಮ್ಮ ಜನರು.</verse>
				<verse number="10">ನಿಮ್ಮ ಪವಿತ್ರ ಪಟ್ಟಣಗಳು ಕಾಡಾಗಿವೆ. ಸಿಯೋನ್ ಪಾಳುಬಿದ್ದಿದೆ. ಜೆರುಸಲೇಮ್ ಹಾಳಾಗಿಹೋಗಿದೆ.</verse>
				<verse number="11">ನಮ್ಮ ಪಿತೃಗಳು ನಿಮ್ಮನ್ನು ಕೀರ್ತಿಸುತ್ತಿದ್ದ ಆ ಸ್ಥಳವೇ, ಆ ನಮ್ಮ ಚೆಲುವ ಪವಿತ್ರಾಲಯವೇ, ಬೆಂಕಿಯ ಪಾಲಾಗಿದೆ. ನಮ್ಮ ಅಮೂಲ್ಯ ವಸ್ತುಗಳೆಲ್ಲ ನಾಶವಾಗಿವೆ.</verse>
				<verse number="12">ಸ್ವಾಮಿ ಸರ್ವೇಶ್ವರಾ, ಇವುಗಳನ್ನು ನೋಡಿಯೂ ಸುಮ್ಮನಿರುವಿರಾ? ನೆಮ್ಮದಿಯಿಂದಿರುವಿರಾ? ನಾವು ತಡೆದುಕೊಳ್ಳಲಾಗದಷ್ಟು ದಂಡಿಸುತ್ತಿರುವಿರಾ?</verse>
			</chapter>
			<chapter number="65">
				<verse number="1">ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ನನ್ನನ್ನು ವಿಚಾರಿಸದವರಿಗೂ ನಾ ದರ್ಶನವಿತ್ತೆ. ನನ್ನನ್ನು ಹುಡುಕದವರಿಗೂ ನಾ ಒಡನೆ ಸಿಕ್ಕಿದೆ. ನನ್ನ ನಾಮಸ್ಮರಣೆ ಮಾಡದ ಜನಾಂಗಕ್ಕೆ, ಇಗೋ, ‘ಇದ್ದೇನೆ, ಇಲ್ಲೇ ಇದ್ದೇನೆ’ ಎನ್ನುತ್ತಿದ್ದೆ.</verse>
				<verse number="2">ನನ್ನನ್ನು ತೊರೆದು ತಮಗೆ ಇಷ್ಟಬಂದ ಹಾದಿಯನ್ನು ಹಿಡಿದು ದುಷ್ಟಮಾರ್ಗದಲ್ಲೆ ನಡೆದ ಜನತೆಯನ್ನು ಕೈಚಾಚಿ ಕರೆದೆ.</verse>
				<verse number="3">ಈ ಜನರು ತೋಪುಗಳಲ್ಲಿ ಬಲಿಕೊಡುತ್ತಾರೆ. ಇಟ್ಟಿಗೆಯ ಪೀಠಗಳ ಮೇಲೆ ಧೂಪಾರತಿ ಎತ್ತುತ್ತಾರೆ.</verse>
				<verse number="4">ಗೋರಿಗಳಲ್ಲಿ ಕುಳಿತುಕೊಳ್ಳುತ್ತಾರೆ, ಗುಪ್ತಸ್ಥಳಗಳಲ್ಲಿ ರಾತ್ರಿಯನ್ನು ಕಳೆಯುತ್ತಾರೆ, ಹಂದಿಯ ಮಾಂಸವನ್ನು ತಿನ್ನುತ್ತಾರೆ, ಅಸಹ್ಯ ಪದಾರ್ಥಗಳ ಸಾರವನ್ನು ತಟ್ಟೆಗಳಲ್ಲಿ ಬಡಿಸಿಕೊಳ್ಳುತ್ತಾರೆ.</verse>
				<verse number="5">ಬೇರೆಯವರಿಗೆ, ‘ಅಲ್ಲೇ ನಿಲ್ಲು, ಹತ್ತಿರ ಬರಬೇಡ; ನಿನಗಿಂತ ನಾನು ಮಡಿವಂತ’ ಎನ್ನುತ್ತಾರೆ. ಹೀಗೆ ಇವರು ನನಗೆ ಉಸಿರುಕಟ್ಟುವ ಹೊಗೆಯಾಗಿದ್ದಾರೆ; ದಿನವೆಲ್ಲ ಉರಿಯುವ ಬೆಂಕಿಯಾಗಿದ್ದಾರೆ.</verse>
				<verse number="6">“ಇಗೋ, ಇವೆಲ್ಲ ನನ್ನ ಕಣ್ಣೆದುರಿಗೆ ಲಿಖಿತವಾಗಿವೆ; ನಾನು ಮುಯ್ಯಿ ತೀರಿಸಿಯೇ ತೀರಿಸುವೆನು, ಸುಮ್ಮನಿರಲಾರೆ.</verse>
				<verse number="7">ಇವರೂ ಇವರ ಪಿತೃಗಳೂ ಬೆಟ್ಟಗುಡ್ಡಗಳ ಮೇಲೆ ಧೂಪಾರತಿ ಎತ್ತಿ ನನ್ನನ್ನು ಅವಮಾನಗೊಳಿಸಿದ್ದಾರೆ. ತಕ್ಕ ಪ್ರತೀಕಾರವನ್ನು ಎಸಗುವೆನು ಈ ಅಪರಾಧಗಳಿಗೆ. ಹೌದು, ಮೊಟ್ಟಮೊದಲು ಪ್ರತೀಕಾರ ಇವರ ಕಾರ್ಯಕ್ಕೆ; ಅದನ್ನು ಸರಿಯಾಗಿ ಅಳೆದು ಸುರಿಸುವೆನು ಇವರ ಮಡಿಲಿಗೆ.”</verse>
				<verse number="8">ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ದ್ರಾಕ್ಷಿಯ ಗೊಂಚಲಿನಲ್ಲಿ ರಸವಿರುವ ತನಕ, ‘ಅದನ್ನು ಹಾಳುಮಾಡಬೇಡ, ಅದೊಂದು ಪ್ರಸಾದ,’ ಎನ್ನುತ್ತಾರೆ ಜನ. ಅಂತೆಯೇ ನಾನು ನನ್ನ ಭಕ್ತಾದಿಗಳನ್ನು ಲಕ್ಷ್ಯಕ್ಕೆ ತಂದುಕೊಂಡು ಜನರೆಲ್ಲರನ್ನು ಹಾಳುಮಾಡಬಾರದು ಎಂದುಕೊಂಡೆನು.</verse>
				<verse number="9">ಯಕೋಬನಿಂದ ಒಂದು ಸಂತಾನವನ್ನು ಉತ್ಪನ್ನಮಾಡುವೆನು; ಯೆಹೂದ ವಂಶದಿಂದ, ನನ್ನ ಪರ್ವತಗಳ ಸೊತ್ತಿಗೆ ಹಕ್ಕುಬಾಧ್ಯತೆಯುಳ್ಳ ಒಂದು ಸಂತತಿಯನ್ನು ಬರಮಾಡುವೆನು. ನನ್ನಿಂದ ಆಯ್ಕೆಯಾದವರು ಆ ಸೊತ್ತನ್ನು ಅನುಭವಿಸುವರು, ನನ್ನ ಭಕ್ತಾದಿಗಳು ಅಲ್ಲಿ ವಾಸಮಾಡುವರು.</verse>
				<verse number="10">ನನ್ನ ಜನರ ಹಿತಕ್ಕಾಗಿ ಶಾರೋನ್‍ಬಯಲು ಮಂದೆಗಳಿಗೆ ಹುಲ್ಲುಗಾವಲಾಗುವುದು; ಆಕೋರಿನ ಕಣಿವೆ ದನಕರುಗಳಿಗೆ ಕೊಟ್ಟಿಗೆಯಾಗುವುದು.</verse>
				<verse number="11">“ಆದರೆ ನನ್ನನ್ನು ತೊರೆದು ನನ್ನ ಪವಿತ್ರ ಪರ್ವತವನ್ನು ಮರೆತು, ‘ಗಾದ್’ ಎಂಬ ಅದೃಷ್ಟ ದೇವತೆಗೆ ಔತಣವನ್ನು ಅಣಿಮಾಡುವ, ‘ಮೆನೀ’ ಎಂಬ ಗತಿ ದೇವತೆಗೆ ಬೆರೆತ ಮದ್ಯವನ್ನು ಭರ್ತಿಮಾಡುವ, ನಿಮಗೆ ಕತ್ತಿಯನ್ನೇ ಗತಿಯನ್ನಾಗಿ ಮಾಡುವೆನು.</verse>
				<verse number="12">ನೀವೆಲ್ಲರು ಕೊಲೆಗೆ ಗುರಿಯಾಗುವಿರಿ, ಕತ್ತಿಗೆ ತುತ್ತಾಗುವಿರಿ. ಏಕೆಂದರೆ, ನಾನು ಕೂಗಿದಾಗ ನೀವು ಉತ್ತರಕೊಡಲಿಲ್ಲ, ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೇ ನಡೆಸಿ ನನಗೆ ಇಷ್ಟವಿಲ್ಲದ್ದನ್ನೇ ಆಯ್ಕೆಮಾಡಿಕೊಂಡಿರಿ.</verse>
				<verse number="13">ಇಗೋ, ನನ್ನ ಭಕ್ತರು ಊಟಮಾಡುವರು, ನೀವಾದರೋ ಹಸಿದಿರುವಿರಿ. ನನ್ನ ಭಕ್ತರು ಪಾನಮಾಡುವರು, ನೀವಾದರೋ ದಾಹಗೊಳ್ಳುವಿರಿ. ನನ್ನ ಭಕ್ತರು ಉಲ್ಲಾಸಗೊಳ್ಳುವರು; ನೀವಾದರೋ ಲಜ್ಜೆಗೊಳ್ಳುವಿರಿ.</verse>
				<verse number="14">ನನ್ನ ಭಕ್ತರು ಹೃದಯಾನಂದದಿಂದ ಹಿಗ್ಗಿ ಹಾಡುವರು; ನೀವಾದರೋ ಮನನೊಂದು ಮೊರೆಯಿಡುವಿರಿ; ದುಃಖದಿಂದ ಅಳುವಿರಿ.</verse>
				<verse number="15">ಆಯ್ಕೆಯಾದವರಿಗೆ ನಿಮ್ಮ ಹೆಸರು ಶಾಪದ ಹೆಸರಾಗಿಯೇ ಉಳಿಯುವುದು. ಏಕೆಂದರೆ, ಸ್ವಾಮಿ ಸರ್ವೇಶ್ವರ ಆದ ನಾನು ನಿಮ್ಮನ್ನು ಕೊಲೆಗೀಡುಮಾಡುವೆನು. ನನ್ನ ಭಕ್ತಾದಿಗಳಿಗಾದರೋ ಹೊಸ ಹೆಸರನ್ನು ಕೊಡುವೆನು.</verse>
				<verse number="16">ಹಳೆಯ ಕಷ್ಟದುಃಖಗಳು ಇನ್ನು ಕಣ್ಮರೆಯಾಗಿಹೋಗುವುವು: ನಾಡಿನಲ್ಲಿ ಆಶೀರ್ವಾದ ಪಡೆಯುವವನು ಸತ್ಯಸ್ವರೂಪನಾದ ದೇವರ ಹೆಸರಿನಲ್ಲಿ ಆಶೀರ್ವಾದ ಪಡೆಯುವನು. ಶಪಥ ಮಾಡುವವನು ಸತ್ಯಸ್ವರೂಪನಾದ ದೇವರ ಹೆಸರಿನಲ್ಲಿ ಶಪಥಮಾಡುವನು.”</verse>
				<verse number="17">ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುವೆನು; ಆಗ, ಮೊದಲಿದ್ದದ್ದು ಜ್ಞಾಪಕದಲ್ಲಿರದು; ಅದು ಯಾರ ನೆನಪಿಗೂ ಬಾರದು.</verse>
				<verse number="18">ನಾನು ಮಾಡುವ ಸೃಷ್ಟಿಕಾರ್ಯದಲ್ಲೇ ಸಂತೋಷಿಸಿ, ಎಂದೆಂದಿಗೂ ಆನಂದಿಸಿರಿ: ಹೌದು, ನಾನು ಜೆರುಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಸುವೆನು; ಅದರ ಜನರನ್ನು ಹರ್ಷಭರಿತರನ್ನಾಗಿಸುವೆನು.</verse>
				<verse number="19">ನಾನು ಕೂಡ ಜೆರುಸಲೇಮನ್ನು ನೋಡಿ ಆನಂದಿಸುವೆನು, ಅದರ ಜನರನ್ನು ದೃಷ್ಟಿಸಿ ಹರ್ಷಗೊಳ್ಳುವೆನು. ಇನ್ನು ಅಲ್ಲಿ ಅಳುವಾಗಲಿ, ಆಕ್ರೋಶವಾಗಲಿ ಕೇಳಿಬರದು.</verse>
				<verse number="20">ಕೆಲವೇ ದಿನ ಬದುಕುವ ಮಗುವಾಗಲಿ, ಆಯುಸ್ಸು ಮುಗಿಸದ ಮುದುಕನಾಗಲಿ ಇನ್ನು ಇಲ್ಲಿರನು. ನೂರು ವರ್ಷ ಬಾಳುವವನು ‘ಯುವಕ’ ಎನಿಸಿಕೊಳ್ಳುವನು; ನೂರರೊಳಗೆ ಸಾಯುವ ಪಾಪಿಯು ‘ಶಾಪಗ್ರಸ್ತ’ ಎನಿಸಿಕೊಳ್ಳುವನು.</verse>
				<verse number="21">ಜನರು ಅಲ್ಲೇ ಮನೆಮಾಡಿ ನಿವಾಸಮಾಡುವರು; ತೋಟ ನೆಟ್ಟು ಅದರ ಫಲವನ್ನು ಅನುಭವಿಸುವರು.</verse>
				<verse number="22">ತಾವು ಕಟ್ಟಿದ ಮನೆಗಳಲ್ಲಿ ಬೇರೆಯವರು ವಾಸಮಾಡುವುದಾಗಲಿ, ತಾವು ನೆಟ್ಟ ತೋಟಗಳ ಫಲವನ್ನು ಬೇರೆಯವರು ಅನುಭವಿಸುವುದಾಗಲಿ ಇನ್ನು ಸಂಭವಿಸದು. ಏಕೆಂದರೆ, ನನ್ನ ಜನರು ಮರಗಳಂತೆ ಬಹುಕಾಲ ಬಾಳುವರು. ನನ್ನಿಂದ ಆಯ್ಕೆಯಾದವರು ತಮ್ಮ ದುಡಿಮೆಯ ಫಲವನ್ನು ದೀರ್ಘಕಾಲ ಅನುಭವಿಸುವರು.</verse>
				<verse number="23">ಅವರು ವ್ಯರ್ಥವಾಗಿ ದುಡಿಯರು, ಅನಾಹುತಕ್ಕಾಗಿ ಮಕ್ಕಳನ್ನು ಹಡೆಯರು. ಸದಾಕಾಲ ಅವರೂ ಅವರ ಸಂತತಿಯವರೂ ಸರ್ವೇಶ್ವರನಿಂದ ಅನುಗ್ರಹಗೊಂಡ ಗೋತ್ರವಾಗುವರು.</verse>
				<verse number="24">ಅವರು ಮೊರೆಯಿಡುವುದಕ್ಕೆ ಮುಂಚೆಯೇ ನಾ ಕಿವಿಗೊಡುವೆನು; ಅವರು ಪ್ರಾರ್ಥಿಸುವಾಗಲೇ ನಾನು ಸದುತ್ತರ ನೀಡುವೆನು.</verse>
				<verse number="25">ತೋಳವೂ ಕುರಿಮರಿಯೂ ಒಂದಾಗಿ ಮೇಯುವುವು; ಸಿಂಹವು ಗೋವಿನಂತೆ ಹುಲ್ಲು ತಿನ್ನುವುದು; ಹಾವಿಗೆ ಮಣ್ಣೇ ಆಹಾರವಾಗುವುದು. ನನ್ನ ಪವಿತ್ರಪರ್ವತದೊಳೆಲ್ಲೂ ಅವು ಯಾವ ಕೇಡು ಮಾಡವು, ಹಾಳುಮಾಡವು.” ಇದು ಸರ್ವೇಶ್ವರ ಸ್ವಾಮಿಯ ನುಡಿ.</verse>
			</chapter>
			<chapter number="66">
				<verse number="1">ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಆಕಾಶವೇ ನನಗೆ ಸಿಂಹಾಸನವಾಗಿರಲು, ಭೂಮಿಯೇ ನನಗೆ ಪಾದಪೀಠವಾಗಿರಲು ನೀವು ನನಗೆ ಕಟ್ಟುವ ಮನೆ ಇನ್ನು ಎಂಥದ್ದು? ನನ್ನ ವಿಶ್ರಾಂತಿಗೆ ತಕ್ಕ ಸ್ಥಳ ಯಾವುದು?</verse>
				<verse number="2">ಇವುಗಳನ್ನೆಲ್ಲ ನಿರ್ಮಿಸಿದ್ದು ನನ್ನ ಕೈಯೇ. ಹೌದು, ಇವುಗಳೆಲ್ಲ ಆದುವು ನನ್ನಿಂದಲೇ. ವಿನಮ್ರನು, ಪಶ್ಚಾತ್ತಾಪ ಪಡುವವನು, ನನ್ನ ಮಾತಿನಲ್ಲಿ ಭಯಭಕ್ತಿಯುಳ್ಳವನು, ಇಂಥವರೇ ನನಗೆ ಮೆಚ್ಚುಗೆಯಾದವರು.</verse>
				<verse number="3">“ಜನರು ಮನಬಂದ ಮಾರ್ಗವನ್ನು ಅನುಸರಿಸುತ್ತಾರೆ; ತಮ್ಮ ಅಸಹ್ಯಕಾರ್ಯಗಳಲ್ಲಿ ಅತ್ಯಾನಂದಪಡುತ್ತಾರೆ. ಹೋರಿಯನ್ನು ಬಲಿಕೊಡುವವನು ನರಬಲಿಯನ್ನು ಕೊಡುತ್ತಾನೆ; ಕುರಿ ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ. ಕಾಣಿಕೆ ಒಪ್ಪಿಸುವವನು ಹಂದಿಯ ನೆತ್ತರನ್ನು ಅರ್ಪಿಸುತ್ತಾನೆ; ಧೂಪಾರತಿ ಎತ್ತುವವನು ವಿಗ್ರಹಾರಾಧನೆಯನ್ನು ಮಾಡುತ್ತಾನೆ.</verse>
				<verse number="4">ಆದುದರಿಂದ ಅವರಿಗೆ ಆಪತ್ತು ಬಂದೊದಗುವಂತೆ ಮಾಡುವೆನು. ಅವರು ಅಂಜುತ್ತಿದ್ದ ವಿಪತ್ತುಗಳನ್ನೇ ಅವರ ಮೇಲೆ ಬರಮಾಡುವೆನು. ಏಕೆಂದರೆ, ನಾನು ಕೂಗಿದಾಗ ಯಾರೂ ಉತ್ತರಿಸಲಿಲ್ಲ, ನಾನು ಹೇಳಿದಾಗ ಅವರು ಕೇಳಲಿಲ್ಲ. ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದರು, ನನಗೆ ಇಷ್ಟವಲ್ಲದ್ದನ್ನೇ ಆಯ್ಕೆಮಾಡಿಕೊಂಡರು.”</verse>
				<verse number="5">ಸರ್ವೇಶ್ವರ ಸ್ವಾಮಿಯ ಮಾತಿನಲ್ಲಿ ಭಯಭಕ್ತಿಯುಳ್ಳವರೇ, ಕೇಳಿ ಸ್ವಾಮಿಯ ಈ ಮಾತನ್ನು! “ನನ್ನ ನಾಮದ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಹೋದರರು, ‘ಸರ್ವೇಶ್ವರ ತನ್ನ ಮಹಿಮೆಯನ್ನು ಬೆಳಗಿಸಲಿ, ಆಗ ನಿಮಗಾಗುವ ಆನಂದವನ್ನು ನೋಡೋಣ,’ ಎಂದು ಜರೆದಿದ್ದಾರಲ್ಲವೆ? ಅವರೇ ನಾಚಿಕೆಪಡಬೇಕಾಗುವುದು!</verse>
				<verse number="6">ಇಗೋ ಕೇಳಿ, ನಗರದ ಕಡೆಯಿಂದ ಕೋಲಾಹಲದ ಶಬ್ದ, ದೇವಾಲಯದಲ್ಲಿ ಶಬ್ದ, ಸರ್ವೇಶ್ವರ ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ!</verse>
				<verse number="7">“ ‘ಪ್ರಸವವೇದನೆಗೆ ಮುಂಚೆಯೇ ಹೆರಿಗೆಯಾಯಿತು; ಪ್ರಸವವೇದನೆ ಪಡುವುದರೊಳಗೆ ಗಂಡನ್ನು ಹೆತ್ತಳು’.</verse>
				<verse number="8">ಇಂಥ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥ ಸಂಗತಿಯನ್ನು ಕಂಡವರಾರು? ಒಂದೇ ದಿನದಲ್ಲಿ ದೇಶವೊಂದು ಹುಟ್ಟೀತೆ? ಕ್ಷಣಮಾತ್ರದಲ್ಲಿ ರಾಷ್ಟ್ರವನ್ನು ಹೆರಲಿಕ್ಕಾದೀತೆ? ಆದರೂ ಪ್ರಸವವೇದನೆ ತೊಡಗಿದೊಡನೆ ಸಿಯೋನೆಂಬಾಕೆ ಮಕ್ಕಳನ್ನು ಹೆತ್ತಿದ್ದಾಳೆ.”</verse>
				<verse number="9">ಪ್ರಸವಕ್ಕೆ ತಂದ ನಾನು ಹೆರಲಿಕ್ಕೆ ಬಿಡದಿರುವೆನೊ?’ - ಎನ್ನುತ್ತಾರೆ ನಿಮ್ಮ ದೇವರು. ‘ಹೆರುವಂತೆ ಮಾಡುವವನಾದ ನಾನು ಗರ್ಭ ಮುಚ್ಚಿಬಿಡುವೆನೊ?’ ಎನ್ನುತ್ತಾರೆ ಸ್ವಾಮಿ ಸರ್ವೇಶ್ವರ.</verse>
				<verse number="10">“ಜೆರುಸಲೇಮನ್ನು ಪ್ರೀತಿಸುವವರೇ, ನೀವೆಲ್ಲರೂ ಆನಂದಿಸಿರಿ ಆಕೆಯೊಂದಿಗೆ, ಹರ್ಷಗೊಳ್ಳಿರಿ ಆಕೆಯ ಬಗ್ಗೆ.</verse>
				<verse number="11">ಆಕೆಯ ನಿಮಿತ್ತ ದುಃಖಿಸುವವರೇ, ‘ಸಾಂತ್ವನ ನೀಡುವ ಆಕೆಯ ಸ್ತನ್ಯದಿಂದ ತೃಪ್ತಿಗೊಳ್ಳುವೆವು, ಹೌದು, ಆಕೆಯ ಸಿರಿಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು,’ ಎಂದು ನೀವೆಲ್ಲರು ಉಲ್ಲಾಸಪಡಿ ಆಕೆಯೊಂದಿಗೆ.”</verse>
				<verse number="12">ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಇಗೋ, ಆಕೆಗೆ ಹರಿಯಮಾಡುವೆನು ಸುಖಶಾಂತಿಯನು ನದಿಯಂತೆ ನೀಡುವೆ ರಾಷ್ಟ್ರಗಳ ವೈಭವವನು ತುಂಬಿತುಳುಕುವ ತೊರೆಯಂತೆ ನೀವಿರುವಿರಿ ಹಾಲುಕುಡಿವ ಹಸುಳೆಯಂತೆ ಎತ್ತಿಕೊಳ್ಳಲಾಗುವುದು ನಿಮ್ಮನ್ನು ತಾಯ ಕಂಕುಳಲಿ ನಲಿದಾಡುವಿರಿ ನೀವು ಆಕೆಯ ಮಡಿಲಲಿ.</verse>
				<verse number="13">ನಾನೇ ನಿಮ್ಮನ್ನು ಸಂತೈಸುವೆನು ತಾಯಿಯಂತೆ ಸಾಂತ್ವನ ದೊರಕುವುದು ನಿಮಗೆ ಜೆರುಸಲೇಮಿನಲೆ.</verse>
				<verse number="14">ಇದನ್ನು ಕಂಡಾಗ ನಿಮ್ಮೆದೆ ಸಂತಸದಿಂದ ಉಬ್ಬುವುದು ಚಿಗುರುವುದು ಹಸಿಹುಲ್ಲಂತೆ ನಿಮ್ಮೆಲುಬು. ‘ಸರ್ವೇಶ್ವರನ ಕೃಪಾಹಸ್ತ ತನ್ನ ಭಕ್ತರ ಮೇಲೆ ಆತನ ರೋಷಾವೇಶ ಶತ್ರುಗಳ ಮೇಲೆ’ ಎಂಬುವುದು ವ್ಯಕ್ತವಾಗುವುದು ನಿಮಗೆ.</verse>
				<verse number="15">ಸರ್ವೇಶ್ವರ ಬರುವನಿದೋ ಅಗ್ನಿಮಯನಾಗಿ ಆತನ ರಥಗಳು ಬಿರುಗಾಳಿಯಂತೆ ರಭಸವಾಗಿ ತೋರಿಸುವನು ತನ್ನ ಸಿಟ್ಟನ್ನು ರೌದ್ರವೇಶದಿಂದ ಖಂಡಿಸುವನು ಧಗಧಗಿಸುವ ಜ್ವಾಲೆಯಿಂದ</verse>
				<verse number="16">ನ್ಯಾಯ ತೀರಿಸುವನು ಸರ್ವೇಶ್ವರ ಮನುಜರಿಗೆಲ್ಲ ಅಗ್ನಿಯಿಂದ, ತನ್ನ ಖಡ್ಗದಿಂದ. ಹತರಾಗುವರು ಬಹುಜನ ಆತನಿಂದ.</verse>
				<verse number="17">“ತಮ್ಮ ಮಧ್ಯಸ್ಥನ ಮಾತಿನ ಪ್ರಕಾರ, ತೋಪುಗಳನ್ನು ಪ್ರವೇಶಿಸಿ, ಒಬ್ಬನ ಹಿಂದೊಬ್ಬರು ತಮ್ಮನ್ನೇ ಶುದ್ಧೀಕರಿಸಿ, ಪವಿತ್ರೀಕರಿಸಿಕೊಂಡು, ಹಂದಿಯ ಮಾಂಸವನ್ನೂ ಅಸಹ್ಯಪದಾರ್ಥಗಳನ್ನೂ ಇಲಿಗಳನ್ನೂ ತಿನ್ನುವ ಜನರು ಒಟ್ಟಿಗೇ ಕೊನೆಗಾಣುವರು.” ಇದು ಸರ್ವೇಶ್ವರ ಸ್ವಾಮಿಯ ನುಡಿ.</verse>
				<verse number="18">“ಅವರ ಕೃತ್ಯಗಳೂ ಆಲೋಚನೆಗಳೂ ನನಗೆ ತಿಳಿದಿವೆ. ಸಮಸ್ತ ರಾಷ್ಟ್ರಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು. ಅವರು ಬಂದು ನನ್ನ ಮಹಿಮೆಯ ಪ್ರಕಾಶವನ್ನು ಕಾಣುವರು.</verse>
				<verse number="19">ಅವರ ಮಧ್ಯೆ ಒಂದು ಸೂಚಕಕಾರ್ಯವನ್ನು ಮಾಡುವೆನು. ಅವರಲ್ಲಿ ಅಳಿದುಳಿದವರನ್ನು ನನ್ನ ಸುದ್ದಿಯನ್ನು ಕೇಳದೆಯೂ ನನ್ನ ಮಹಿಮೆಯನ್ನು ಕಾಣದೆಯೂ ಇರುವವರ ಬಳಿಗೆ ಕಳಿಸುವೆನು. ತಾರ್ಷೀಷ್, ಲಿಬಿಯಾ, ಧನುರ್ಧಾರಿಗಳಾದ ಲೂದಿಯಾ, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ದೂರದ ದ್ವೀಪನಿವಾಸಿಗಳ ಬಳಿಗೂ ಕಳಿಸುವೆನು. ಈ ಅನ್ಯಜನಾಂಗಗಳಿಗೆ ಅವರು ನನ್ನ ಮಹಿಮೆಯನ್ನು ಪ್ರಕಟಿಸುವರು.</verse>
				<verse number="20">ನನಗೆ ಕಾಣಿಕೆಯಾಗಿ ಎಲ್ಲ ಜನಾಂಗಗಳಿಂದ ನಿಮ್ಮ ಸಹೋದರರನ್ನು ಕರೆದುತರುವರು. ಇಸ್ರಯೇಲರು ನನ್ನ ಆಲಯಕ್ಕೆ ಶುದ್ಧ ಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವಂತೆ, ಅವರನ್ನು ಕುದುರೆ, ತೇರು, ಪಲ್ಲಕ್ಕಿ, ಹೇಸರಗತ್ತೆ, ಒಂಟೆ, ಇವುಗಳ ಮೇಲೆ ಏರಿಸಿಕೊಂಡು ಜೆರುಸಲೇಮೆಂಬ ನನ್ನ ಪವಿತ್ರ ಪರ್ವತಕ್ಕೆ ಕರೆದುತರುವರು.</verse>
				<verse number="21">ನಾನು ಅವರಲ್ಲಿ ಕೆಲವರನ್ನು ಯಾಜಕರನ್ನಾಗಿಯೂ ಲೇವಿಯರನ್ನಾಗಿಯೂ ಆರಿಸಿಕೊಳ್ಳುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.</verse>
				<verse number="22">“ನಾ ಸೃಷ್ಟಿಸುವ ಹೊಸ ಆಕಾಶ, ಹೊಸ ಭೂಮಿ, ನಿಲ್ಲುವುವು ನನ್ನ ಮುಂದೆ ಸ್ಥಿರವಾಗಿ; ಅಂತೆಯೇ ನಿಮ್ಮ ಸಂತತಿ, ನಿಮ್ಮ ಹೆಸರು ನಿಲ್ಲುವುವು ಸ್ಥಿರವಾಗಿ.</verse>
				<verse number="23">ಅಮವಾಸ್ಯೆಯಿಂದ ಅಮವಾಸ್ಯೆಯವರೆಗೆ ಸಬ್ಬತ್‍ದಿನದಿಂದ ಸಬ್ಬತ್‍ದಿನದವರೆಗೆ ಮನುಜರೆಲ್ಲರು ಬರುವರು ನನ್ನನ್ನು ಆರಾಧಿಸಲಿಕ್ಕೆ.” ಇದು ಸರ್ವೇಶ್ವರ ಸ್ವಾಮಿಯ ನುಡಿ.</verse>
				<verse number="24">ಅವರು ಹೊರಟುಹೋಗುವಾಗ ನೋಡುವರು ನನಗೆ ದ್ರೋಹವೆಸಗಿದವರ ಹೆಣಗಳನು ಸಾಯುವುದಿಲ್ಲ ಅವುಗಳನ್ನು ಕಡಿಯುವ ಹುಳು ಆರುವುದಿಲ್ಲ ಅವುಗಳನ್ನು ಸುಡುವ ಬೆಂಕಿಯು ಎಲ್ಲ ಮನುಜರಿಗವು ಅಸಹ್ಯವಾಗಿರುವುವು.”</verse>
			</chapter>
		</book>
		<book number="24">
			<chapter number="1">
				<verse number="1">ಇವು ಯೆರೆಮೀಯನ ಪ್ರವಚನಗಳು. ಈತ ಬೆನ್ಯಮೀನ್ ಪ್ರಾಂತ್ಯಕ್ಕೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನು. ಇವನ ತಂದೆ ಹಿಲ್ಕೀಯನು.</verse>
				<verse number="2">ಜುದೇಯದ ಅರಸನೂ ಅಮೋನನ ಮಗನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೆಯ ವರುಷದಲ್ಲಿ ಸರ್ವೇಶ್ವರ ಸ್ವಾಮಿಯ ವಾಣಿ ಇವನಿಗೆ ಕೇಳಿಬಂತು.</verse>
				<verse number="3">ಅಲ್ಲದೆ, ಜುದೇಯದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಜುದೇಯದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರುಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ಜನರು ಸೆರೆಹೋಗುವ ತನಕ ಸರ್ವೇಶ್ವರ ಸ್ವಾಮಿಯ ವಾಣಿ ಇವನಿಗೆ ಕೇಳಿಬರುತ್ತಿತ್ತು.</verse>
				<verse number="4">ಸರ್ವೇಶ್ವರ ಸ್ವಾಮಿ ಈ ವಾಣಿಯನ್ನು ನನಗೆ ದಯಪಾಲಿಸಿದರು:</verse>
				<verse number="5">“ನಿನ್ನನ್ನು ತಾಯಿಯ ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆಯೇ ನಿನ್ನನ್ನು ನಾನು ತಿಳಿದಿದ್ದೇ; ನೀನು ಉದರದಿಂದ ಹೊರಬರುವುದಕ್ಕೆ ಮೊದಲೇ ನಿನ್ನನ್ನು ಪವಿತ್ರೀಕರಿಸಿದ್ದೇ; ನಿನ್ನನ್ನು ರಾಷ್ಟ್ರಗಳಿಗೆ ಪ್ರವಾದಿಯನ್ನಾಗಿ ನೇಮಿಸಿದ್ದೇನೆ.”</verse>
				<verse number="6">ಅದಕ್ಕೆ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನಾನು ಮಾತುಬಲ್ಲವನಲ್ಲ, ಇನ್ನೂ ತರುಣ,” ಎಂದು ಬಿನ್ನವಿಸಿದೆ.</verse>
				<verse number="7">ಆಗ ಸರ್ವೇಶ್ವರ ನನಗೆ, “ನಾನೊಬ್ಬ ತರುಣ ಎನ್ನಬೇಡ; ಯಾರ ಬಳಿಗೆ ನಿನ್ನನ್ನು ಕಳಿಸುತ್ತೇನೋ, ಅವರೆಲ್ಲರ ಬಳಿಗೆ ನೀನು ಹೋಗಲೇಬೇಕು; ನಾನು ಆಜ್ಞಾಪಿಸುವುದನ್ನೆಲ್ಲ ನುಡಿಯಲೇ ಬೇಕು.</verse>
				<verse number="8">ಅವರಿಗೆ ಅಂಜಬೇಡ; ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗೆ ಇರುತ್ತೇನೆ; ಇದು ಸರ್ವೇಶ್ವರನಾದ ನನ್ನ ಮಾತು,” ಎಂದು ಹೇಳಿದರು.</verse>
				<verse number="9">ಬಳಿಕ ಸ್ವಾಮಿ ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;</verse>
				<verse number="10">ರಾಷ್ಟ್ರಗಳ ಮೇಲೂ ರಾಜ್ಯಗಳ ಮೇಲೂ ಅಧಿಕಾರವುಳ್ಳವನನ್ನಾಗಿ ನಾನು ನಿನ್ನನ್ನು ಈ ದಿನ ನೇಮಿಸಿದ್ದೇನೆ. ಇದರಿಂದಾಗಿ ಕಿತ್ತುಹಾಕುವ ಹಾಗು ಕೆಡುವುವ, ನಾಶಪಡಿಸುವ ಹಾಗು ನೆಲಸಮಮಾಡುವ, ಕಟ್ಟುವ ಹಾಗು ನೆಡುವ ಕಾರ್ಯ ನಿನ್ನದು,” ಎಂದರು</verse>
				<verse number="11">ಇದಲ್ಲದೆ ಸರ್ವೇಶ್ವರ ಸ್ವಾಮಿ, “ಎಲೈ ಯೆರೆಮೀಯನೇ, ಏನು ನೋಡುತ್ತಿರುವೆ?” ಎಂದು ಕೇಳಿದರು. ಅದಕ್ಕೆ ನಾನು, ಚಚ್ಚರ ಮರದ ರೆಂಬೆಯನ್ನು ನೋಡುತ್ತಿದ್ದೇನೆ,” ಎಂದೆ.</verse>
				<verse number="12">ಆಗ ಸ್ವಾಮಿ ನನಗೆ, “ಸರಿಯಾಗಿ ನೋಡಿದೆ; ನನ್ನ ಮಾತನ್ನು ನೆರವೇರಿಸುವುದಕ್ಕೆ ಎಚ್ಚರಗೊಂಡಿದ್ದೇನೆಂದು ತಿಳಿದುಕೊ” ಎಂಬುದಾಗಿ ಹೇಳಿದರು.</verse>
				<verse number="13">ಮತ್ತೆ ಸರ್ವೇಶ್ವರ ನನಗೆ, “ಇನ್ನೂ ಏನು ನೋಡುತ್ತಿರುವೆ?” ಎಂದರು. ಅದಕ್ಕೆ ನಾನು, “ಉರಿಯುತ್ತಿರುವ ಬೆಂಕಿಯಿಂದ ಉಕ್ಕುವ ಹಂಡೆಯೊಂದನ್ನು ನೋಡುತ್ತಿದ್ದೇನೆ. ಅದರ ಬಾಯಿ ಉತ್ತರದಿಂದ ಇತ್ತ ಬಾಗಿಕೊಂಡಿದೆ,” ಎಂದೆ.</verse>
				<verse number="14">ಅದಕ್ಕೆ ಸ್ವಾಮಿ ನನಗೆ ಹೀಗೆಂದರು: “ಈ ನಾಡಿನ ನಿವಾಸಿಗಳೆಲ್ಲರ ಮೇಲೆ ಉತ್ತರದಿಂದ ಕೇಡು ಉಕ್ಕಿಬರುವುದು.</verse>
				<verse number="15">ಇಗೋ, ಉತ್ತರದ ರಾಜ್ಯಗಳನ್ನೆಲ್ಲಾ ನಾನು ಕರೆಯುವೆನು; ಅವರು ಬಂದು ಜೆರುಸಲೇಮಿನ ಊರಬಾಗಿಲುಗಳ ಎದುರಿನಲ್ಲೂ ಅದರ ಎಲ್ಲ ಪೌಳಿಗೋಡೆಗಳ ಸುತ್ತಲೂ ಜುದೇಯದ ಎಲ್ಲ ನಗರಗಳಲ್ಲೂ ತಮ್ಮ ತಮ್ಮ ಸಿಂಹಾಸನಗಳನ್ನು ಹಾಕಿಕೊಳ್ಳುವರು.</verse>
				<verse number="16">ನನ್ನ ಸ್ವಜನರು ನನ್ನನ್ನೆ ತೊರೆದುಬಿಟ್ಟು, ಅನ್ಯದೇವತೆಗಳಿಗೆ ಬಲಿಯರ್ಪಿಸಿ, ತಮ್ಮ ಕೈಯಿಂದ ನಿರ್ಮಿಸಿದ ಮೂರ್ತಿಗಳಿಗೆ ಆರಾಧನೆ ಮಾಡುತ್ತಿದ್ದಾರೆ; ಇಂಥ ಅಧರ್ಮಕ್ಕೆಲ್ಲ ನಾನು ಅವರಿಗೆ ವಿಧಿಸುವ ದಂಡನೆಗಳನ್ನು ತಿಳಿಸುವೆನು, ಕೇಳು:</verse>
				<verse number="17">ನೀನು ಎದ್ದು ನಡುಕಟ್ಟಿಕೊ, ನಾನು ಆಜ್ಞಾಪಿಸುವುದನ್ನೆಲ್ಲ ಅವರಿಗೆ ತಿಳಿಸು, ಅವರಿಗೆ ಹೆದರಬೇಡ; ಹೆದರಿದರೆ ನಾನೂ ನಿನ್ನನ್ನು ಅವರ ಮುಂದೆ ಹೆದರಿಸುವೆನು.</verse>
				<verse number="18">ನಾನು ಹೇಳುವುದನ್ನು ಗಮನದಿಂದ ಕೇಳು - ಈ ದಿನ ನಿನ್ನನ್ನು ಜುದೇಯದ ಅರಸರು, ಅಧಿಪತಿಗಳು, ಯಾಜಕರು, ಜನಸಾಮಾನ್ಯರು, ಹೀಗೆ ನಾಡಿನವರೆಲ್ಲರನ್ನು ಎದುರಿಸತಕ್ಕವನನ್ನಾಗಿ ಮಾಡಿದ್ದೇನೆ; ಕೋಟೆಕೊತ್ತಲಗಳಿಂದ ಸುಸಜ್ಜಿತ ನಗರವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ತಾಮ್ರದ ಪೌಳಿಗೋಡೆಯನ್ನಾಗಿಯೂ ನಿನ್ನನ್ನು ಸ್ಥಾಪಿಸಿದ್ದೇನೆ.</verse>
				<verse number="19">ನಿನಗೆ ವಿರುದ್ಧವಾಗಿ ಅವರು ಯುದ್ಧಮಾಡುವರು; ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಕಾಪಾಡಲು ನಾನೇ ನಿನ್ನೊಂದಿಗಿರುವೆನು. ಇದು ಸರ್ವೇಶ್ವರನಾದ ನನ್ನ ನುಡಿ\.</verse>
			</chapter>
			<chapter number="2">
				<verse number="1">ಸರ್ವೇಶ್ವರ ಸ್ವಾಮಿ ನನಗೆ ನೀಡಿದ ಆದೇಶ ಇದು:</verse>
				<verse number="2">“ನೀನು ಹೋಗಿ ಜೆರುಸಲೇಮ್ ನಗರಕ್ಕೇ ಕೇಳಿಸುವಂತೆ ಈ ಸಂದೇಶವನ್ನು ಸಾರು: ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವ ವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆಯಿಲ್ಲದ ಅರಣ್ಯಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ; ಇದು ನಿನ್ನ ಹಿತಕ್ಕಾಗಿಯೇ.</verse>
				<verse number="3">“ಎಲೈ ಇಸ್ರಯೇಲ್, ನೀನು ನನಗೆ ಮೀಸಲಾದವಳು, ನನ್ನ ಬೆಳೆಯ ಪ್ರಥಮ ಫಲ. ಯಾರು ಯಾರು ಅದನ್ನು ತಿಂದರೋ ಅವರು ದ್ರೋಹಿಗಳು, ಕೇಡಿಗೆ ಗುರಿಯಾದವರು, ಎನ್ನುತ್ತಾರೆ ಸರ್ವೇಶ್ವರ.”</verse>
				<verse number="4">ಯಕೋಬನ ಮನೆತನವೇ, ಇಸ್ರಯೇಲ್ ವಂಶದ ಸಕಲ ಗೋತ್ರಗಳೇ, ಸರ್ವೇಶ್ವರ ಸ್ವಾಮಿಯ ವಾಣಿಯನ್ನು ಕೇಳಿರಿ; ಸರ್ವೇಶ್ವರ ಹೀಗೆನ್ನುತ್ತಾರೆ:</verse>
				<verse number="5">“ನಿಮ್ಮ ಪಿತೃಗಳು ನನ್ನಲ್ಲಿ ಯಾವ ಕೊರತೆಯನ್ನು ಕಂಡು ನನ್ನಿಂದ ದೂರವಾದರು? ಅವರು ವ್ಯರ್ಥಾಚಾರಗಳನ್ನು ಅನುಸರಿಸುತ್ತಾ ತಾವೇ ವ್ಯರ್ಥವಾಗಿಬಿಟ್ಟರು!</verse>
				<verse number="6">ಅವರು - ‘ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿ, ಕಾಡುಮೇಡು, ಹಳ್ಳಕೊಳ್ಳ, ಕಗ್ಗತ್ತಲು, ನಿರ್ಜಲ, ನಿರ್ಜನ ಹಾಗೂ ಯಾರೂ ಹಾದುಹೋಗದ ಬೆಂಗಾಡಿನ ಮಾರ್ಗವಾಗಿ ನಡೆಸಿಬಂದ ಆ ಸರ್ವೇಶ್ವರ ಎಲ್ಲಿ?’ ಎಂದುಕೊಳ್ಳಲಿಲ್ಲವೆ?</verse>
				<verse number="7">ನಾನು ನಿಮ್ಮನ್ನು ಫಲವತ್ತಾದ ನಾಡಿಗೆ ಕರೆತಂದೆ. ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆ. ಆದರೆ ನೀವು ಒಳನುಗ್ಗಿ ಬಂದು ಆ ನನ್ನ ನಾಡನ್ನು ಹೊಲೆಮಾಡಿದಿರಿ; ಆ ನನ್ನ ಸೊತ್ತನ್ನು ಅಸಹ್ಯಪಡಿಸಿದಿರಿ.</verse>
				<verse number="8">ಯಾಜಕರು, ‘ಸರ್ವೇಶ್ವರ ಸ್ವಾಮಿ ಎಲ್ಲಿ? ಎಂದು ವಿಚಾರಿಸಲೇ ಇಲ್ಲ. ಧರ್ಮಶಾಸ್ತ್ರಿಗಳು ನನ್ನನ್ನು ಅರಿತುಕೊಳ್ಳಲಿಲ್ಲ. ಪ್ರಜಾಪಾಲಕರು ನನಗೆ ದ್ರೋಹಮಾಡಿದರು. ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದನೆ ಮಾಡಿದರು. ನಿರರ್ಥಕವಾದುವುಗಳನ್ನು ಪೂಜಿಸಿದರು.’</verse>
				<verse number="9">\ಆದಕಾರಣ ಸರ್ವೇಶ್ವರನಾದ ನಾನು ನಿಮ್ಮೊಡನೆ ಇನ್ನೂ ವ್ಯಾಜ್ಯಮಾಡುತ್ತೇನೆ; ನಿಮ್ಮ ಸಂತಾನದವರೊಂದಿಗೂ ವ್ಯಾಜ್ಯವಾಡುವೆನು,” ಎನ್ನುತ್ತಾರೆ ಸರ್ವೇಶ್ವರ.</verse>
				<verse number="10">“ಸೈಪ್ರಸ್ ದ್ವೀಪಗಳಿಗೆ ಹೋಗಿ ನೋಡಿ; ಕೇದಾರ್ ನಾಡಿಗೆ ಕಳಿಸಿ ವಿಚಾರಮಾಡಿ, ಇಂಥ ಕಾರ್ಯ ಎಲ್ಲಿಯಾದರು ನಡೆಯಿತೆ ಎಂದು ಚೆನ್ನಾಗಿ ಆಲೋಚಿಸಿರಿ.</verse>
				<verse number="11">ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರು ಬದಲಾಯಿಸಿಕೊಂಡಿತೋ? ಆದರೆ ನನ್ನ ಜನ, ತಮ್ಮ ಮಹಿಮೆಯಾದ ನನ್ನನ್ನು ತೊರೆದು ನಿರರ್ಥಕವಾದುವುಗಳನ್ನು ಆರಿಸಿಕೊಂಡಿದ್ದಾರೆ!</verse>
				<verse number="12">ಆಕಾಶ ಮಂಡಲವೇ, ಇದನ್ನು ಕೇಳಿ ನಿಬ್ಬೆರಗಾಗು; ತತ್ತರಿಸಿ ಹಾಳಾಗು!” ಇದು ಸರ್ವೇಶ್ವರ ಸ್ವಾಮಿಯ ವಾಣಿ.</verse>
				<verse number="13">“ನನ್ನ ಜನರು ಇಬ್ಬಗೆಯ ಅಪರಾಧಗಳನ್ನು ಎಸಗಿದ್ದಾರೆ; ಜೀವಜಲದ ಬುಗ್ಗೆಯಾದ ನನ್ನನ್ನೇ ತೊರೆದುಬಿಟ್ಟಿದ್ದಾರೆ! ತೊಟ್ಟಿಗಳನ್ನು, ನೀರುನಿಲ್ಲದ ಬಿರುಕು ತೊಟ್ಟಿಗಳನ್ನು ತಮಗಾಗಿ ಕೊರೆದುಕೊಂಡಿದ್ದಾರೆ!”</verse>
				<verse number="14">“ಇಸ್ರಯೇಲ್ ಒಬ್ಬ ಮನೆ ಆಳೊ? ಮನೆಯಲ್ಲೆ ಗುಲಾಮನಾಗಿ ಹುಟ್ಟಿದವನೋ? ಇಲ್ಲವಾದರೆ ಬೇರೆಯವರಿಂದ ಏಕೆ ಸೂರೆಯಾದ?</verse>
				<verse number="15">ಶತ್ರುಗಳು ಯುವ ಸಿಂಹಗಳಂತೆ ಅವನಿಗೆ ವಿರುದ್ಧ ಗರ್ಜಿಸಿ ಆರ್ಭಟಿಸುತ್ತಿವೆ; ಅವನ ನಾಡನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.</verse>
				<verse number="16">ಹೌದು, ಮೆಮ್‍ಫಿಸ್ ಮತ್ತು ತಹಪನೇಸ್ ನಿವಾಸಿಗಳು ನಿನ್ನ ನಾಡನೆತ್ತಿಯನ್ನು ನುಣ್ಣಗೆ ಮೇದುಬಿಟ್ಟಿದ್ದಾರೆ.</verse>
				<verse number="17">ನಿನಗೆ ಮಾರ್ಗದರ್ಶಿಯಾಗಿದ್ದ, ನಿನಗೆ ದೇವರಾಗಿದ್ದ ಸರ್ವೇಶ್ವರನಾದ ನನ್ನನ್ನೇ ತೊರೆದುಬಿಟ್ಟು ಇದನ್ನೆಲ್ಲ ನೀನೇ ನಿನ್ನ ಮೇಲೆ ಬರಮಾಡಿಕೊಂಡಿರುವೆ.</verse>
				<verse number="18">ನೈದ್ ನದಿಯ ನೀರನ್ನು ಕುಡಿಯಲು ಈಜಿಪ್ಟಿನ ದಾರಿಯನ್ನು ಹಿಡಿದದ್ದರಿಂದ ನಿನಗೆ ಬಂದ ಲಾಭವಾದರೂ ಏನು? ಯೂಫ್ರೆಟಿಸ್ ನದಿಯ ಜಲವನ್ನು ಪಾನಮಾಡಲು ಅಸ್ಸೀರಿಯ ಮಾರ್ಗದಲ್ಲಿ ಹೆಜ್ಜೆಯಿಟ್ಟಿದ್ದರಿಂದ ನಿನಗೆ ಬಂದ ಲಾಭವಾದರೂ ಏನು?</verse>
				<verse number="19">ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವುವು. ನಿನಗೆ ನನ್ನ ಭಯವಿಲ್ಲದೆ ನಿನ್ನ ದೇವರಾದ ಸರ್ವೇಶ್ವರನಾದ ನನ್ನನ್ನು ತೊರೆದುಬಿಟ್ಟದ್ದು ನಿನಗೆ ಕೆಟ್ಟದ್ದಾಗಿಯೂ ಕಹಿಯಾಗಿಯೂ ಪರಿಣಮಿಸುವುದು. ಇದನ್ನು ಚೆನ್ನಾಗಿ ಗ್ರಹಿಸಿಕೊ, ಕಣ್ಣಾರೆ ನೋಡು. ಇದು ಸರ್ವಶಕ್ತನೂ, ಸ್ವಾಮಿ ಸರ್ವೇಶ್ವರನೂ ಆದ ನನ್ನ ನುಡಿ.”</verse>
				<verse number="20">“ಬಹುಕಾಲದಿಂದ ನೀನು ನಿನ್ನ ನೊಗವನ್ನು ಮುರಿದಿರುವೆ ಕಣ್ಣಿಗಳನ್ನು ಕಿತ್ತು, ‘ನಾನು ಸೇವೆಮಾಡುವುದಿಲ್ಲ’ ಎಂದಿರುವೆ. ಎತ್ತರವಾದ ಪ್ರತಿಯೊಂದು ಗುಡ್ಡೆಯ ಮೇಲೂ ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೂ ವೇಶ್ಯೆಯಂತೆ ಬೇರೆ ದೇವರುಗಳಿಗೆ ಅಡ್ಡಬಿದ್ದಿರುವೆ.</verse>
				<verse number="21">ಅತ್ಯುತ್ತಮ ಬೀಜದಿಂದ ಬೆಳೆದ ಒಳ್ಳೆಯ ದ್ರಾಕ್ಷಾಲತೆಯನ್ನಾಗಿ ನಿನ್ನನ್ನು ನೆಟ್ಟಿದೆ. ಆದರೆ ನೀನು ಕಾಡುದ್ರಾಕ್ಷೀಬಳ್ಳಿಯ ಹಾಳು ರೆಂಬೆಗಳಾದದ್ದು ಹೇಗೆ?</verse>
				<verse number="22">ನೀನು ಎಷ್ಟೇ ಚೌಳಿನಿಂದ ತೊಳೆದುಕೊಂಡರೂ ಎಷ್ಟೇ ಸಬ್ಬುಸೀಗೆಯಿಂದ ಉಜ್ಜಿಕೊಂಡರೂ ನಿನ್ನ ಅಕ್ರಮ ನನ್ನೆದುರಿಗೆ ಕಣ್ಣುಕಿಚ್ಚಾಗಿ ನಿಂತಿದೆ. ಇದು ಸರ್ವೇಶ್ವರ ಸ್ವಾಮಿಯಾದ ನನ್ನ ನುಡಿ.</verse>
				<verse number="23">‘ನಾನು ಅಶುದ್ಧಳಾಗಲಿಲ್ಲ, ಬಾಳ್‍ದೇವತೆಗಳನ್ನು ಹಿಂಬಾಲಿಸಲೇ ಇಲ್ಲ’ ಎಂದು ಹೇಗೆ ತಾನೆ ಹೇಳಬಲ್ಲೆ? ಆ ಕಣಿವೆಯಲ್ಲಿ ನಿನ್ನ ಹೆಜ್ಜೆಗುರುತುಗಳನ್ನು ನೋಡು ಅಲ್ಲಿ ನೀನು ಎಸಗಿದ ದುಷ್ಕೃತ್ಯಗಳನ್ನು ಮನಸ್ಸಿಗೆ ತಂದುಕೊ. ಅತ್ತ ಇತ್ತ ನೆಗೆದಾಡುವ, ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ ನೀನು.</verse>
				<verse number="24">ಅಡವಿಯಲ್ಲೆ ಪಳಗಿದ, ಮದದಿಂದ ಗಾಳಿಯನ್ನು ಬುಸಬುಸನೆ ಮೂಸಿನೋಡುವ ಹೆಣ್ಣು ಕಾಡುಕತ್ತೆಯ ಹಾಗಿರುವೆ. ಅದಕ್ಕೆ ಬೆದೆ ಏರಿದಾಗ ಯಾವ ಗಂಡುಕತ್ತೆಯೂ ಅದನ್ನು ಬದಿಗೊತ್ತುವಂತಿಲ್ಲ ಅದನ್ನು ಹುಡುಕುವವುಗಳೆಲ್ಲ ಆಯಾಸಪಡಬೇಕಾಗಿಲ್ಲ. ಅವಳ ತಿಂಗಳಲ್ಲಿ ಅವಳನ್ನು ಸುಲಭವಾಗಿ ದೊರಕಿಸಿಕೊಳ್ಳುವುವು.</verse>
				<verse number="25">ನಾನು, ‘ಅನ್ಯದೇವತೆಗಳನ್ನು ಅರಸಿ ಓಡಬೇಡ, ನಿನ್ನ ಪಾದರಕ್ಷೆ ಸವೇದೀತು, ನಿನ್ನ ಗಂಟಲು ಸೊರಗೀತು’ ಎಂದೆ. ನೀನೋ, ‘ಆ ಮಾತು ಆಶಾದಾಯಕವಲ್ಲ, ಅದನ್ನು ಕೇಳಲಾಗದು; ಅನ್ಯದೇವತೆಗಳ ಮೇಲೆ ಮೋಹಗೊಂಡಿದ್ದೇನೆ. ಅವರನ್ನೇ ಹಿಂಬಾಲಿಸುತ್ತೇನೆ’ ಎಂದೆ.”</verse>
				<verse number="26">ಸರ್ವೇಶ್ವರ ಹೀಗೆನ್ನುತ್ತಾರೆ: “ಕಳ್ಳನು ಸಿಕ್ಕಿಬಿದ್ದು ಹೇಗೆ ನಾಚಿಕೆಪಡುತ್ತಾನೋ ಹಾಗೆಯೆ, ಎಲೈ ಇಸ್ರಯೇಲ್ ಜನರೇ, ನೀವು ನಾಚಿಕೆಪಡುವಿರಿ. ಮರಕ್ಕೆ, ‘ನೀನು, ನನ್ನ ತಂದೆ’ ಎಂತಲೂ ಕಲ್ಲಿಗೆ, ‘ನೀನು ಹೆತ್ತ ತಾಯಿ’ ಎಂತಲೂ ಹೇಳುತ್ತೀರಿ. ನಿಮ್ಮ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ಎಲ್ಲರು ಮಾನಭಂಗಕ್ಕೆ ಈಡಾಗುವರು.</verse>
				<verse number="27">ನನಗೆ ಅಭಿಮುಖರಾಗದೆ ಬೆನ್ನುಮಾಡಿದ್ದೀರಿ. ಕೇಡು ಸಂಭವಿಸಿದಾಗ ಮಾತ್ರ, ‘ಎದ್ದು ಬಂದು ನಮ್ಮನ್ನು ಉದ್ಧರಿಸು’ ಎಂದು ಮೊರೆಯಿಡುತ್ತೀರಿ.</verse>
				<verse number="28">“ಎಲೈ ಯೆಹೂದ ಜನರೇ, ನೀವು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿಮಗೆ ಕೇಡು ಸಂಭವಿಸಿದಾಗ ನಿಮ್ನನ್ನು ಉದ್ಧರಿಸಲು ಅವರು ಶಕ್ತರಾಗಿದ್ದರೆ ಎದ್ದುಬರಲಿ! ನಿಮಗೆ ನಗರಗಳು ಎಷ್ಟಿವೆಯೋ ಅಷ್ಟೂ ದೇವರುಗಳು ಇದ್ದಾರೆ!</verse>
				<verse number="29">ನಿಮ್ಮ ದೂರೇನು? ನೀವೆಲ್ಲರು ನನಗೆ ದ್ರೋಹಿಗಳಾದಿರಿ, ಏಕೆ?</verse>
				<verse number="30">ನಾನು ನಿಮ್ಮನ್ನು ದಂಡಿಸಿದ್ದು ವ್ಯರ್ಥವಾಯಿತು, ನೀವು ತಿದ್ದುಕೊಳ್ಳಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ಕತ್ತಿಗೆ ತುತ್ತಾಗಿಸಿದ್ದೀರಿ.</verse>
				<verse number="31">ಇಸ್ರಯೇಲ್ ಜನರೇ, ದುಷ್ಟಸಂತತಿಯವರೇ, ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿರಿ: ನಾನು ನಿಮಗೆ ಬೆಂಗಾಡಾಗಿಯೂ ಗಾಢಾಂಧಕಾರವಾಗಿಯೂ ಪರಿಣಮಿಸಿದ್ದೇನೊ? ‘ನಾವು ಮನಬಂದಂತೆ ನಡೆದುಕೊಳ್ಳುತ್ತೇವೆ; ನಿನ್ನ ಬಳಿಗೆ ಇನ್ನು ಬಾರೆವು’ ಎಂದು ನನ್ನ ಜನರಾದ ನೀವು ಹೇಳುವುದು ಹೇಗೆ?</verse>
				<verse number="32">ಒಬ್ಬ ಯುವತಿ ತನ್ನ ಆಭರಣಗಳನ್ನು, ಒಬ್ಬ ವಧು ತನ್ನ ಡಾಬನ್ನು ಮರೆಯುವುದುಂಟೆ? ನನ್ನ ಜನರೋ ಲೆಕ್ಕವಿಲ್ಲದಷ್ಟು ದಿನ ನನ್ನನ್ನು ಮರೆತಿದ್ದಾರೆ.</verse>
				<verse number="33">ನೀವು ನಿಮ್ಮ ನಲ್ಲನಲ್ಲೆಯರನ್ನು ಹುಡುಕಿಕೊಂಡು ಹೋಗುವುದರಲ್ಲಿ ಎಷ್ಟೋ ನಿಪುಣರು! ಬಲು ಕೆಟ್ಟ ಹೆಂಗಸು ಕೂಡ ನಿಮ್ಮಿಂದ ಕಲಿತುಕೊಳ್ಳಬಹುದಾಗಿದೆ.</verse>
				<verse number="34">ಇದಲ್ಲದೆ, ನಿರ್ದೋಷಿಗಳಾದ ದೀನದಲಿತರ ಪ್ರಾಣರಕ್ತ ನಿಮ್ಮ ಬಟ್ಟೆಗೆ ಅಂಟಿಕೊಂಡಿದೆ! ‘ಇವರು ಕನ್ನ ಕೊರೆಯುವುದನ್ನು ಕಂಡೆವು’ ಎಂದು ನೀವು ನೆವ ಹೇಳುವಂತಿಲ್ಲ. ನಿಮ್ಮ ಈ ಎಲ್ಲ ದುರಭ್ಯಾಸಗಳ ನಿಮಿತ್ತ ದಂಡಿಸುವೆನು.</verse>
				<verse number="35">“ನೀವಾದರೋ, ‘ನಾವು ನಿರ್ದೋಷಿಗಳು, ಸರ್ವೇಶ್ವರನ ಕೋಪ ನಮ್ಮ ಮೇಲಿಂದ ತೊಲಗಿಹೋಗಿದೆ, ಇದು ನಿಶ್ಚಯ’ ಎಂದುಕೊಂಡಿದ್ದೀರಿ. ‘ನಾವು ಪಾಪಮಾಡಿಲ್ಲ’ ಎಂದು ನೀವು ಹೇಳಿದ ಕಾರಣ ನಿಮ್ಮನ್ನು ನ್ಯಾಯತೀರ್ಪಿಗೆ ಗುರಿಮಾಡಿಯೇ ತೀರುವೆನು.</verse>
				<verse number="36">ನಿಮ್ಮ ಮಾರ್ಗವನ್ನು ಕೈಬಿಟ್ಟು ಎಷ್ಟು ಸುಲಭವಾಗಿ ಅತ್ತಿತ್ತ ಓಡಾಡುತ್ತೀರಿ! ಅಸ್ಸೀರಿಯದ ವಿಷಯವಾಗಿ ಹೇಗೆ ಆಶಾಭಂಗಪಟ್ಟಿರೋ ಹಾಗೆಯೇ ಈಜಿಪ್ಟಿನ ವಿಷಯವಾಗಿಯೂ ಆಶಾಭಂಗಪಡುವಿರಿ.</verse>
				<verse number="37">ಅಲ್ಲಿಂದಲೂ ನಿರಾಶೆಯಿಂದ ತಲೆಯ ಮೇಲೆ ಕೈಹೊತ್ತು ಹೊರಡುವಿರಿ. ನೀವು ಯಾರಲ್ಲಿ ನಂಬಿಕೆಯಿಟ್ಟಿದ್ದಿರೋ ಅವರನ್ನು ಸರ್ವೇಶ್ವರನಾದ ನಾನು ನಿರಾಕರಿಸಿದ್ದೇನೆ. ಅವರಿಂದ ನಿಮ್ಮ ಕಾರ್ಯ ಕೈಗೂಡದು.”</verse>
			</chapter>
			<chapter number="3">
				<verse number="1">ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಗಂಡನು ತ್ಯಜಿಸಿದವಳು, ಅವನಿಂದ ಹೊರಟು ಮತ್ತೊಬ್ಬನವಳಾದ ಮೇಲೆ, ಅವಳನ್ನು ಆ ಗಂಡನು ಮತ್ತೆ ಸೇರಿಸಿಕೊಳ್ಳುತ್ತಾನೆಯೆ? ಸೇರಿಸಿಕೊಂಡರೆ ಆ ನಾಡು ಕೆಟ್ಟು ಅಪವಿತ್ರವಾಗಿ ಹೋಗುವುದಿಲ್ಲವೇ? ಹೀಗಿರಲು ಓ ಇಸ್ರಯೇಲ್, ಬಹುಮಂದಿ ಮಿಂಡರೊಡನೆ ವೇಶ್ಯವಾಟಿಕೆ ನಡೆಸಿದ ನೀನು ನನ್ನ ಬಳಿಗೆ ಬರುವೆಯಾ?</verse>
				<verse number="2">ಕಣ್ಣೆತ್ತಿ ಬೋಳು ಬೆಟ್ಟಗಳನ್ನು ನೋಡು, ಯಾವುದರಲ್ಲಿ ತಾನೆ ನೀನು ವೇಶ್ಯೆಯಾಗಿ ವರ್ತಿಸಲಿಲ್ಲ? ಅರಬೀಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚುಹಾಕುತ್ತಾ ಕುಳಿತಿದ್ದೆ. ನಿನ್ನ ವೇಶ್ಯೆತನದಿಂದಲೂ ನಿನ್ನ ಕೆಟ್ಟತನದಿಂದಲೂ ನಾಡನ್ನು ಅಪವಿತ್ರಮಾಡಿರುವೆ.</verse>
				<verse number="3">ಆದಕಾರಣವೇ ಹದಮಳೆಗೆ ಅಡ್ಡಿಯಾಯಿತು. ವಸಂತಕಾಲದ ಮಳೆ ಬರದೆಹೋಯಿತು. ಇನ್ನೂ ನೀನು ವೇಶ್ಯೆ ಮುಖದವಳು, ಲಜ್ಜೆಗೆಟ್ಟವಳು!</verse>
				<verse number="4">“ಈಗತಾನೆ. ‘ನೀವೆ ನನ್ನ ತಂದೆ, ನನ್ನ ಯೌವನದ ಆಪ್ತರು’ ಎಂದು ಕರೆಯುತ್ತಿರುವೆ.</verse>
				<verse number="5">ನಿತ್ಯಕ್ಕೂ ಕೋಪ ಮಾಡಬೇಡಿ; ಕೊನೆಯತನಕ ಸಿಟ್ಟುಗೊಳ್ಳಬೇಡಿ’ ಎಂದು ಕೋರುತ್ತಿರುವೆ. ಹೀಗಲ್ಲ ನೀನು ಹೇಳುತ್ತಿರುವೆಯಾದರೂ ನಿನ್ನಿಂದ ಸಾಧ್ಯವಾಗುವಷ್ಟು ದುಷ್ಕೃತ್ಯಗಳನ್ನು ಮಾಡಿ ಕೃತಾರ್ಥಳಾಗಿರುವೆ!”</verse>
				<verse number="6">ಅರಸ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದು ಹೇಳಿದರು - “ಭ್ರಷ್ಟಳಾದ ಇಸ್ರಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ನನ್ನನ್ನು ತೊರೆದುಬಿಟ್ಟು ಎತ್ತರವಾದ ಗುಡ್ಡಗಳನ್ನೆಲ್ಲ ಹತ್ತಿ, ಹುಲುಸಾಗಿ ಬೆಳೆದ ಎಲ್ಲ ಮರಗಳ ಕೆಳಗೆ ಹೋಗಿ ವೇಶ್ಯೆಯಂತೆ ವರ್ತಿಸುತ್ತಿದ್ದಾಳೆ.</verse>
				<verse number="7">ಅವಳು ಇಂಥವುಗಳನ್ನೆಲ್ಲ ಮಾಡಿದ ಮೇಲೆ ನನ್ನ ಬಳಿಗೆ ಮರಳಿ ಬಂದೇ ಬರುವಳು ಎಂದುಕೊಂಡಿದ್ದೆ. ಆದರೆ ಬರಲಿಲ್ಲ. ಆಗ ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ಇದನ್ನು ನೋಡಿದಳು.</verse>
				<verse number="8">ಭ್ರಷ್ಟಳಾದ ಇಸ್ರಯೇಲ್ ನನಗೆ ವಿಮುಖಳಾಗಿ ವ್ಯಭಿಚಾರಿಣಿಯಂತೆ ವರ್ತಿಸಿದ ಕಾರಣದಿಂದಲೆ, ನಾನು ಅವಳನ್ನು ನಿರಾಕರಿಸಿ ವಿವಾಹ ವಿಚ್ಛೇದನ ಪತ್ರಕೊಟ್ಟದ್ದನ್ನು ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನೋಡಿಯೂ ಅಂಜದೆಹೋದಳು. ತಾನೂ ಹೋಗಿ ವೇಶ್ಯೆಯಂತೆ ವರ್ತಿಸಿದಳು.</verse>
				<verse number="9">ಕಲ್ಲುಮರಗಳಿಗೆ ಆರಾಧನೆಮಾಡಿ ವ್ಯಭಿಚಾರಿಣಿಯಾದಳು. ಇದೆಲ್ಲ ಲಘುವೆಂದು ಭಾವಿಸಿ ತನ್ನ ವೇಶ್ಯಾ ವರ್ತನೆಯಿಂದ ನಾಡನ್ನು ಅಪವಿತ್ರಪಡಿಸಿದಳು.</verse>
				<verse number="10">ಇಸ್ರಯೇಲಳಿಗೆ ಇಷ್ಟು ದಂಡನೆ ಆದರೂ ಜುದೇಯವೆಂಬ ದ್ರೋಹಿಯಾದ ಅವಳ ತಂಗಿ ನನ್ನ ಕಡೆಗೆ ಪೂರ್ಣಮನಸ್ಸಿನಿಂದ ತಿರುಗಿಕೊಳ್ಳಲಿಲ್ಲ. ತಿರುಗಿಕೊಂಡಂತೆ ನಟಿಸಿದಳು ಮಾತ್ರ. ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="11">ಬಳಿಕ ಸರ್ವೇಶ್ವರ ಸ್ವಾಮಿ ನನಗೆ ಇಂತೆಂದರು - “ಭ್ರಷ್ಟಳಾದ ಇಸ್ರಯೇಲ್ ದ್ರೋಹಿಯಾದ ಜುದೇಯಳಿಗಿಂತ ಶಿಷ್ಟಳಾಗಿ ಕಂಡುಬಂದಿದ್ದಾಳೆ.</verse>
				<verse number="12">ನೀನು ಉತ್ತರ ದಿಕ್ಕಿಗೆ ಹೋಗಿ ಆ ಇಸ್ರಯೇಲಿಗೆ ಈ ಸಂದೇಶವನ್ನು ಸಾರು - ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ; ಭ್ರಷ್ಟಳಾದ ಇಸ್ರಯೇಲೇ, ಹಿಂದಿರುಗು; ನಾನು ಅಷ್ಟು ಕೋಪಮುಖದಿಂದ ನಿನ್ನನ್ನು ನೋಡುವುದಿಲ್ಲ. ನಾನು ಕರುಣಾಮೂರ್ತಿ, ನಿತ್ಯಕೋಪಿಯಲ್ಲ.</verse>
				<verse number="13">ನೀನು ನಿನ್ನ ತಪ್ಪನ್ನು ಮಾತ್ರ ಒಪ್ಪಿಕೊ. ಕಂಡ ಕಡೆಯೆಲ್ಲ ಅಲೆದಾಡಿ, ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೆ ಅನ್ಯದೇವರುಗಳನ್ನು ಸೇರಿ, ನನ್ನ ಮಾತುಗಳನ್ನು ಕೇಳದೆ, ನಿನ್ನ ದೇವರಾದ ಸರ್ವೇಶ್ವರ ಎಂಬ ನನಗೇ ದ್ರೋಹಮಾಡಿರುವೆ ಎಂಬುದನ್ನು ಒಪ್ಪಿಕೊ.</verse>
				<verse number="14">“ಭ್ರಷ್ಟರಾದ ಜನರೇ, ನನಗೆ ಅಭಿಮುಖರಾಗಿರಿ, ನಾನು ನಿಮಗೆ ಅಧಿಪತಿ. ನಿಮ್ಮಲ್ಲಿ ಒಂದು ಪಟ್ಟಣಕ್ಕೆ ಒಬ್ಬನಂತೆ, ಗೋತ್ರಕ್ಕೆ ಇಬ್ಬರಂತೆ ಆರಿಸಿ ಸಿಯೋನಿಗೆ ಕರೆತರುವೆನು.</verse>
				<verse number="15">ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ಕೊಡುವೆನು. ಅವರು ನಿಮ್ಮನ್ನು ಜ್ಞಾನವಿವೇಕಗಳಿಂದ ಪೋಷಿಸುವರು.</verse>
				<verse number="16">ನೀವು ನಾಡಿನಲ್ಲಿ ಹೆಚ್ಚಿ ಅಭಿವೃದ್ಧಿಯಾದಾಗ, ‘ಸರ್ವೇಶ್ವರನ ಒಡಂಬಡಿಕೆಯ ಮಂಜೂಷವೆಲ್ಲಿ?’ ಎಂದು ಪ್ರಸ್ತಾಪಿಸುವಂತಿಲ್ಲ. ಅದು ಜ್ಞಾಪಕಕ್ಕೆ ಬರುವುದಿಲ್ಲ, ಯಾರೂ ಅದನ್ನು ಸ್ಮರಿಸುವುದಿಲ್ಲ. ಅದು ಇಲ್ಲವಲ್ಲಾ ಎಂದು ದುಃಖಿಸುವುದಿಲ್ಲ. ಹೊಸದೊಂದನ್ನು ಕಲ್ಪಿಸಿಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.</verse>
				<verse number="17">ಆ ಕಾಲ ಬಂದಾಗ ಜೆರುಸಲೇಮನ್ನೇ ‘ಸರ್ವೇಶ್ವರನ ಸಿಂಹಾಸನ’ ಎಂದು ಕರೆಯುವರು. ನನ್ನ ನಾಮಮಹತ್ವದ ಸ್ಥಾನವಾದ ಜೆರುಸಲೇಮಿಗೆ ಸಕಲ ರಾಷ್ಟ್ರಗಳವರು ನೆರೆದುಬರುವರು. ಆಮೇಲೆ ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆಯಲಾರರು.</verse>
				<verse number="18">ಆ ಕಾಲದಲ್ಲಿ ಜುದೇಯ ವಂಶವು ಇಸ್ರಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತ್ಯವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.”</verse>
				<verse number="19">ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಎಲೈ ಇಸ್ರಯೇಲ್, ನಾನು ಎಷ್ಟೋ ಆದರದಿಂದ ನಿನ್ನನ್ನು ನನ್ನ ಪುತ್ರನೆಂದು ಭಾವಿಸಿ, ನಿನಗೆ ಮನೋಹರವಾದ ನಾಡನ್ನು, ಅಂದರೆ, ಸಮಸ್ತ ರಾಷ್ಟ್ರಗಳಲ್ಲಿ ರಮಣೀಯವಾದ ಸೊತ್ತನ್ನು ಕೊಡಬೇಕು ಎಂದುಕೊಂಡಿದ್ದೆ. ನೀನು ನನ್ನನ್ನು ‘ತಂದೆ’ ಎಂದು ಸನ್ಮಾನಿಸಿ, ನನ್ನನ್ನು ತಪ್ಪದೆ ಹಿಂಬಾಲಿಸಿ ಬರುವೆಯೆಂದಿದ್ದೆ.</verse>
				<verse number="20">“ಆದರೆ ಓ ಇಸ್ರಯೇಲ್ ವಂಶಜರೇ, ಒಬ್ಬ ಹೆಂಗಸು ಪತಿದ್ರೋಹ ಮಾಡಿದಂತೆ ನೀವು ನನಗೆ ದ್ರೋಹಮಾಡಿರುವುದು ನಿಶ್ಚಯ. ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="21">ಇಗೋ ಕೇಳಿ, ಬೋಳು ಗುಡ್ಡಗಳ ಮೇಲಿಂದ ಒಂದು ಶಬ್ದ: ‘ನಾವು ಡೊಂಕುದಾರಿಯನ್ನು ಹಿಡಿದಿದ್ದೇವೆ. ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯನ್ನು ಮರೆತುಬಿಟ್ಟಿದ್ದೇವೆ’ ಎಂದು ಇಸ್ರಯೇಲರು ಕಣ್ಣೀರು ಸುರಿಸುತ್ತಾ ದೇವರ ಕೃಪೆಯನ್ನು ಬೇಡುತ್ತಿದ್ದಾರೆ.</verse>
				<verse number="22">ಸರ್ವೇಶ್ವರ: “ಭ್ರಷ್ಟರಾದ ಜನರೇ, ಹಿಂದಿರುಗಿ ಬನ್ನಿ, ನಾನು ನಿಮ್ಮ ಭ್ರಷ್ಟತನವನ್ನು ಪರಿಹರಿಸುವೆನು.”</verse>
				<verse number="23">ಜನರು: “ಇಗೋ, ನಿಮಗೆ ಅಭಿಮುಖರಾಗಿ ಬಂದಿದ್ದೇವೆ. ನೀವೇ ನಮ್ಮ ಸರ್ವೇಶ್ವರ, ನಮ್ಮ ದೇವರು. ನಿಶ್ಚಯವಾಗಿ ಬೆಟ್ಟಗುಡ್ಡಗಳಿಂದಲೂ ಜಾತ್ರೆಜಂಗುಳಿಯಿಂದಲೂ ನಮಗೆ ಮೋಸವಾಯಿತು. ಇಸ್ರಯೇಲಿನ ಉದ್ಧಾರ ಇರುವುದು ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯ ಕೈಯಲ್ಲೇ, ಇದು ಸತ್ಯಕ್ಕೂ ಸತ್ಯ.</verse>
				<verse number="24">ನಾವು ಚಿಕ್ಕಂದಿನಿಂದ ನೋಡಿರುವಂತೆ ನಮ್ಮ ಪಿತೃಗಳು ದುಡಿದದ್ದನ್ನೂ ಅವರ ದನಕುರಿಗಳನ್ನೂ ಅವರ ಗಂಡುಹೆಣ್ಣು ಮಕ್ಕಳನ್ನೂ ಬಾಳ್ ದೇವತೆ ಕಬಳಿಸುತ್ತಾ ಬಂದಿದೆ.</verse>
				<verse number="25">ನಾವೇ ತಂದುಕೊಂಡ ಅವಮಾನವೆಂಬ ಹಾಸಿಗೆಯಲ್ಲಿ ಬಿದ್ದಿರೋಣ. ನಾಚಿಕೆಯೆಂಬ ಹೊದಿಕೆ ನಮ್ಮನ್ನು ಮುಚ್ಚಿಬಿಡಲಿ. ಚಿಕ್ಕತನದಿಂದ ಈವರೆಗು ನಾವೂ ನಮ್ಮ ಪೂರ್ವಜರೂ ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಗೆ ಇದಿರಾಗಿ ಪಾಪಮಾಡುತ್ತಾ ಬಂದಿರುವುದು ನಿಶ್ಚಯ. ಆ ಸ್ವಾಮಿಯ ಮಾತನ್ನು ಕೇಳದೆಹೋದೆವಲ್ಲಾ!” ಎಂದು ಮೊರೆಯಿಡುತ್ತಿದ್ದಾರೆ.</verse>
			</chapter>
			<chapter number="4">
				<verse number="1">ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಇಸ್ರಯೇಲಿನ ಜನರೇ, ನೀವು ಹಿಂದಿರುಗುವಿರಾದರೆ ನನ್ನ ಬಳಿಗೆ ಬನ್ನಿ. ಅಸಹ್ಯವಾದ ನಿಮ್ಮ ಮೂರ್ತಿ ಪೂಜಾವಸ್ತುಗಳನ್ನು ನನ್ನ ಕಣ್ಣೆದುರಿನಿಂದ ತೆಗೆದುಬಿಡಿ. ಆಗ ನೀವು ಅತ್ತಿತ್ತ ತೂರಾಡಲಾರಿರಿ.</verse>
				<verse number="2">‘ಸರ್ವೇಶ್ವರ ಸ್ವಾಮಿಯ ಜೀವದಾಣೆ’ ಎಂದು ಸತ್ಯ, ನ್ಯಾಯ, ನೀತಿಗೆ ಅನುಗುಣವಾಗಿ ಪ್ರಮಾಣಮಾಡಿರಿ, ಆಗ ರಾಷ್ಟ್ರಗಳೆಲ್ಲ ನನ್ನಿಂದ ಆಶೀರ್ವಾದ ಪಡೆಯಲು ಆಶಿಸುವರು, ನನ್ನಲ್ಲೇ ಹೆಮ್ಮೆಪಡುವರು.”</verse>
				<verse number="3">ಜುದೇಯದವರಿಗೂ ಜೆರುಸಲೇಮಿನವರಿಗೂ ಸರ್ವೇಶ್ವರ ಹೇಳುವುದೇನೆಂದರೆ - “ಪಾಳುಬಿದ್ದ ನಿಮ್ಮ ಹೊಲಗದ್ದೆಗಳನ್ನು ಉತ್ತು ಹದಮಾಡಿ, ಮುಳ್ಳುಗಳ ನಡುವೆ ಬಿತ್ತಬೇಡಿ.</verse>
				<verse number="4">ಜುದೇಯದವರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನಾದ ನನಗಾಗಿ ಸುನ್ನತಿಯಾಗಿರಿ. ನಿಮ್ಮ ಹೃದಯದ ಮುಂದೊಗಲನ್ನು ತೆಗೆದುಹಾಕಿರಿ. ಇಲ್ಲವಾದರೆ ನಿಮ್ಮ ಪಾಪಾಕ್ರಮಗಳ ನಿಮಿತ್ತ ನನ್ನ ಕೋಪಾಗ್ನಿಯು ಭುಗಿಲೆದ್ದು ಆರಿಸಲಾಗದಷ್ಟು ಧಗಧಗಿಸುವುದು.”</verse>
				<verse number="5">ಜುದೇಯದಲ್ಲಿ ಸಾರಿರಿ; ಜೆರುಸಲೇಮಿನಲ್ಲಿ ಪ್ರಕಟಿಸಿರಿ. ನಾಡಿನಲ್ಲೆಲ್ಲ ಕೊಂಬೂದುತ್ತಾ ಆಜ್ಞಾಪಿಸಿರಿ. ‘ಕೂಡಿಬನ್ನಿ, ಕೋಟೆಕೊತ್ತಲಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ’ ಎಂದು ಕೂಗಿ ಹೇಳಿರಿ.</verse>
				<verse number="6">ಸಿಯೋನಿನ ಕಡೆಗೆ ಧ್ವಜವನ್ನೆತ್ತಿರಿ. ತಡಮಾಡದೆ ವಲಸೆಹೋಗಿರಿ. ಸರ್ವೇಶ್ವರ ಉತ್ತರದಿಂದ ವಿಪತ್ತನ್ನೂ ಘೋರ ನಾಶವನ್ನೂ ಬರಮಾಡುವರು.</verse>
				<verse number="7">ಗುಹೆಬಿಟ್ಟು ಹೊರಟುಬರುವ ಸಿಂಹದಂತೆ ರಾಷ್ಟ್ರಗಳ ವಿನಾಶಕನೊಬ್ಬನು ಎದ್ದಿದ್ದಾನೆ; ಹೊರಟು ಬರುತ್ತಿದ್ದಾನೆ. ಅವನು ಜುದೇಯ ನಾಡನ್ನು ಹಾಳುಮಾಡುವನು. ಅದರ ಪಟ್ಟಣಗಳು ನಿರ್ಜನ ಪ್ರದೇಶಗಳಾಗುವುವು.</verse>
				<verse number="8">ಈ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಅತ್ತುಗೋಳಾಡಿರಿ. ಸರ್ವೇಶ್ವರ ಸ್ವಾಮಿಯ ಕೋಪ ಅಗ್ನಿಯು ಜುದೇಯವನ್ನು ಬಿಟ್ಟುಹೋಗಿಲ್ಲ.</verse>
				<verse number="9">ಸರ್ವೇಶ್ವರ ಸ್ವಾಮಿ ಹೀಗೆಂದರು - “ಆ ದಿನದಂದು ಅರಸರು ಎದೆಗುಂದುವರು, ಅಧಿಪತಿಗಳ ಹೃದಯ ಕುಗ್ಗುವುದು. ಯಾಜಕರು ಸ್ತಬ್ಧರಾಗುವರು; ಪ್ರವಾದಿಗಳು ನಿಬ್ಬೆರಗಾಗುವರು.”</verse>
				<verse number="10">ಆಗ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನೀವು ನಿಶ್ಚಯವಾಗಿಯೂ ಈ ಜನರನ್ನು ಹಾಗೂ ಜೆರುಸಲೇಮಿನವರನ್ನು ಮೋಸಗೊಳಿಸಿದ್ದೀರಿ. ‘ನಿಮಗೆ ಸಮಾಧಾನವಾಗುವುದು’ ಎಂದು ಅವರಿಗೆ ಹೇಳಿದಿರಿ, ಆದರೆ ಕತ್ತಿ ಅವರ ಕುತ್ತಿಗೆಗೆ ಬಂದಿದೆ” ಎಂದೆನು.</verse>
				<verse number="11">ಆ ದಿನ ಬಂದಾಗ ಈ ಜನರಿಗೂ ಜೆರುಸಲೇಮಿಗೂ ಈ ಮಾತುಗಳನ್ನು ತಿಳಿಸಲಾಗುವುದು; ಬಿಸಿಗಾಳಿ ಒಣಗಾಡಿನ ಗುಡ್ಡಗಳಿಂದ ಬೀಸಿ ದೇವಪ್ರಜೆಯೆಂಬ ಯುವತಿಯ ಮೇಲೆ ಬೀಸುವುದು. ಅದು ಹೊಟ್ಟನ್ನು ತೂರುವುದಕ್ಕೆ ಅಲ್ಲ, ಕಾಳನ್ನು ಶೋಧಿಸುವುದಕ್ಕೆ ಅಲ್ಲ.</verse>
				<verse number="12">ಸರ್ವೇಶ್ವರನ ಆಜ್ಞೆಯ ಮೇರೆಗೆ ಬರುವ ಆ ಗಾಳಿ ಬಿರುಸಾಗಿ ಬಡಿಯುವುದು. ತಮ್ಮ ಜನರಿಗೆ ನ್ಯಾಯ ದಂಡನೆಯನ್ನು ಸ್ವಾಮಿ ಸರ್ವೇಶ್ವರನೇ ವಿಧಿಸುವರು.</verse>
				<verse number="13">ಮೇಘಗಳೋಪಾದಿಯಲ್ಲಿ ಶತ್ರು ಬರುತ್ತಿರುವುದನ್ನು ನೋಡು. ಅವನ ರಥಗಳು ಬಿರುಗಾಳಿಯಂತೆ! ಅವನ ಕುದುರೆಗಳು ರಣಹದ್ದುಗಳಂತೆ! ಅಯ್ಯೋ ನಮಗೆ ಕೇಡು, ಇನ್ನು ನಮ್ಮ ಗತಿ ಮುಗಿಯಿತು!</verse>
				<verse number="14">ಜೆರುಸಲೇಮ್, ನೀನು ತಪ್ಪಿಸಿಕೊಳ್ಳಬೇಕಾದರೆ ನಿನ್ನ ಹೃದಯದಲ್ಲಿರುವ ಕೆಟ್ಟತನವನ್ನು ತೊಳೆದುಬಿಡು. ದುರಾಲೋಚನೆಗಳನ್ನು ನಿನ್ನ ಮನದಲ್ಲಿ ಇನ್ನೆಷ್ಟರವರೆಗೆ ಇಟ್ಟುಕೊಂಡಿರುವೆ?</verse>
				<verse number="15">ದಾನ್ ನಗರದಿಂದ ಪ್ರಕಟನೆಯ ಧ್ವನಿ ಕೇಳಿ ಬರುತ್ತದೆ. ಎಫ್ರಯಿಮಿನ ಬೆಟ್ಟದಿಂದ ಕೇಡನ್ನು ಸಾರಲಾಗುತ್ತದೆ.</verse>
				<verse number="16">ಇಗೋ ಅವರು ರಾಷ್ಟ್ರಗಳಿಗೆ ಅರುಹಿಸುವ ಸಮಾಚಾರ: ಮುತ್ತಿಗೆ ಹಾಕುವವರು ದೂರದೇಶದಿಂದ ಜೆರುಸಲೇಮಿಗೆ ಬರುವರು. ಜುದೇಯದ ಪಟ್ಟಣಗಳಿಗೆ ವಿರುದ್ಧ ಘೋಷಣೆಗಳನ್ನು ಪ್ರಕಟಿಸುವರು.</verse>
				<verse number="17">ಹೊಲ ಕಾಯುವವರಂತೆ ಅದನ್ನು ಸುತ್ತುಗಟ್ಟುವರು. ಏಕೆಂದರೆ ಅದರ ಜನರು ಸರ್ವೇಶ್ವರ ಸ್ವಾಮಿಗೇ ತಿರುಗಿಬಿದ್ದಿದ್ದಾರೆ. ಇದು ಆ ಸ್ವಾಮಿಯ ನುಡಿ.</verse>
				<verse number="18">ಜುದೇಯ ನಾಡೇ, ನಿನ್ನ ನಡತೆ ಹಾಗೂ ಕೃತ್ಯಗಳೇ ನಿನಗೆ ಈ ವಿಪತ್ತನ್ನು ಒದಗಿಸಿವೆ. ಇದು ನಿನ್ನ ಪಾಪದ ಪ್ರತಿಫಲ. ನೋಡು ಎಷ್ಟು ಕಹಿಯಾಗಿದೆ; ಹೃದಯ ಇರಿಯುವಂತಿದೆ!</verse>
				<verse number="19">ಅಯ್ಯೋ, ನನ್ನ ಕರುಳು ಯಾತನೆಯಿಂದ ಕಿತ್ತುಬರುವಂತಿದೆ. ಅಕಟಾ! ನನ್ನ ಗುಂಡಿಗೆಯ ಪಕ್ಕೆಗಳು ಸೀಳುವಂತಿದೆ, ಹೃದಯ ತಳಮಳಗೊಂಡಿದೆ! ಇನ್ನು ಬಾಯಿಮುಚ್ಚಿಕೊಂಡಿರಲು ನನ್ನಿಂದಾಗದು; ನನ್ನ ಮನವೇ, ಕಾಳಗದ ಕಹಳೆಯನ್ನೂ ಯುದ್ಧದ ಕೋಲಾಹಲವನ್ನೂ ಕೇಳುತ್ತಿರುವೆ, ಅಲ್ಲವೆ?</verse>
				<verse number="20">ನಾಶನದ ಮೇಲೆ ನಾಶನದ ಸುದ್ದಿ, ನಾಡೆಲ್ಲ ಕಾಡಾಯಿತು. ದಿಢೀರೆಂದು ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ತುಂಡುತುಂಡಾದವು!</verse>
				<verse number="21">ಎಷ್ಟರವರೆಗೆ ನಾನು ಯುದ್ಧಪತಾಕೆಗಳನ್ನು ನೋಡುತ್ತಿರಲಿ! ಯುದ್ಧ ಕಹಳೆಗಳು ಮೊಳಗುವುದನ್ನು ಕೇಳುತ್ತಿರಲಿ!</verse>
				<verse number="22">ಸರ್ವೇಶ್ವರ ಹೀಗೆನ್ನುತ್ತಾರೆ: ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು. ಪೆದ್ದ ಮಕ್ಕಳು, ಬುದ್ಧಿಯಿಲ್ಲದವರು ಕೇಡುಮಾಡುವುದರಲ್ಲಿ ಪ್ರವೀಣರು ಒಳಿತನ್ನು ಮಾಡಲು ಅರಿಯರು</verse>
				<verse number="23">ನಾನು ಭೂಮಿಯನ್ನು ನೋಡಿದೆ, ಅದು ಬಿಕೋ ಎನ್ನುತ್ತಿತ್ತು. ಆಕಾಶವನ್ನು ದಿಟ್ಟಿಸಿದೆ, ಅದರಲ್ಲಿ ಬೆಳಕೇ ಇರಲಿಲ್ಲ.</verse>
				<verse number="24">ಬೆಟ್ಟಗಳನ್ನು ನೋಡಿದೆ, ಅವು ನಡುನಡುಗುತ್ತಿದ್ದವು. ಗುಡ್ಡ ದಿಣ್ಣೆಗಳೂ ಅಲ್ಲೋಲಕಲ್ಲೋಲವಾಗಿದ್ದವು.</verse>
				<verse number="25">ಕಣ್ಣೆತ್ತಿ ನೋಡಿದೆ, ಏನಾಶ್ಚರ್ಯ! ಜನರೊಬ್ಬರೂ ಇಲ್ಲ, ಆಕಾಶದ ಪಕ್ಷಿಗಳೆಲ್ಲವೂ ಕಾಣೆಯಾಗಿದ್ದವು.</verse>
				<verse number="26">ಇನ್ನೂ ನೋಡಿದೆ - ಸೊಂಪಾದ ನಾಡು ಈಗ ಸುಡುಗಾಡು ಅಕಟಾ! ಸರ್ವೇಶ್ವರನ ಮುಂದೆ, ಅವರ ಕೋಪಾಗ್ನಿಯ ಮುಂದೆ ಊರುಗಳೆಲ್ಲವು ಪಾಳುಬಿದ್ದಿದ್ದವು.</verse>
				<verse number="27">ಸರ್ವೇಶ್ವರ ಸ್ವಾಮಿ ಹೀಗೆಂದಿದ್ದಾರೆ: ನಾಡೆಲ್ಲ ಬಟ್ಟಬರಿದಾಗುವುದು; ಆದರೆ ನಾನು ಅದನ್ನು ಸಂಪೂರ್ಣವಾಗಿ ಲಯಮಾಡುವುದಿಲ್ಲ.</verse>
				<verse number="28">ಲೋಕ ದುಃಖಿಸುವುದು ಆಕಾಶ ಕಪ್ಪಗಾಗುವುದು ಇದು ಸರ್ವೇಶ್ವರ ಆಡಿದ ಮಾತು. ಇದನ್ನು ಬದಲಾಯಿಸುವಂತಿಲ್ಲ. ಇದು ಅವರ ತೀರ್ಮಾನ; ಇದನ್ನು ರದ್ದುಗೊಳಿಸುವಂತಿಲ್ಲ.</verse>
				<verse number="29">ರಾಹುತರ ಹಾಗೂ ಬಿಲ್ಲುಗಾರರ ಅಬ್ಬರಕ್ಕೆ ಓಡುತ್ತಿರುವವರು ಪಟ್ಟಣಿಗರೆಲ್ಲರು ಇತ್ತ ಪೊದೆಗಳಲ್ಲಿ ಅವಿತುಕೊಳ್ಳುತ್ತಾರೆ. ಅತ್ತ ಬಂಡೆಗಳನ್ನು ಹತ್ತುತ್ತಿದ್ದಾರೆ. ಪ್ರತಿಯೊಂದು ಪಟ್ಟಣ ಪಾಳುಬಿದ್ದ ಬೀಡು ಅದರಲ್ಲಿ ಮತ್ತೆ ವಾಸಮಾಡುವವರು ಒಬ್ಬರೂ ಇಲ್ಲ.</verse>
				<verse number="30">ಎಲೈ ಜೆರುಸಲೇಮ್, ಸೂರೆಯಾಗುವಾಗ ಏನು ಮಾಡುವೆ? ಪಟ್ಟದ ಬಟ್ಟೆಗಳನ್ನು ಉಟ್ಟುಕೊಂಡು ಚಿನ್ನದ ಒಡವೆಗಳನ್ನು ತೊಟ್ಟುಕೊಂಡು ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೆ ಏನು ಪ್ರಯೋಜನ? ಎಲ್ಲವೂ ವ್ಯರ್ಥ! ನಿನ್ನ ಮಿಂಡರೇ ನಿನ್ನನ್ನು ತಿರಸ್ಕರಿಸಿ ನಿನ್ನ ಪ್ರಾಣಹುಡುಕುವರು.</verse>
				<verse number="31">ಸಿಯೋನ್ ನಗರಿ ಪ್ರಸವವೇದನೆ ಪಡುವವಳಂತೆ ಚೊಚ್ಚಲ ಹೆರಿಗೆಯ ವೇದನೆಯನ್ನು ಅನುಭವಿಸುವವಳಂತೆ ಕಿರಿಚಿಕೊಳ್ಳುವ ಕೂಗನ್ನು ನಾನು ಕೇಳಿದ್ದೇನೆ. ಉಬ್ಬಸಪಡುತ್ತಾ ಎರಡು ಕೈಗಳನ್ನೂ ಚಾಚಿ ‘ಅಯ್ಯೋ ನನಗೆ ಕೇಡು, ಕೊಲೆಗಡುಕನ ಮುಂದೆ ನನ್ನ ಪ್ರಾಣ ಉಡುಗುತ್ತಿದೆ’ ಎಂದು ಅರುಚಿಕೊಳ್ಳುತ್ತಿಹಳು.</verse>
			</chapter>
			<chapter number="5">
				<verse number="1">ಜೆರುಸಲೇಮಿನ ಜನರೇ, ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನೋಡಿ ಅಲ್ಲಿನ ಚೌಕಗಳಲ್ಲಿ ಹುಡುಕಾಡಿ ನೋಡಿ. ನೀತಿಯನ್ನು ಕೈಗೊಂಡು ಸತ್ಯವನ್ನರಸುವವನು ಒಬ್ಬನಾದರೂ ಇದ್ದಾನೆಯೇ? ಅಂಥ ಸತ್ಪುರುಷ ಸಿಕ್ಕುತ್ತಾನೆಯೆ ಎಂಬುದನ್ನು ನೀವೇ ನಿಶ್ಚಯಿಸಿರಿ; ಸಿಕ್ಕಿದ್ದೇ ಆದರೆ ಸರ್ವೇಶ್ವರ ಸ್ವಾಮಿ ಆ ನಗರವನ್ನು ಕ್ಷಮಿಸುವರು.</verse>
				<verse number="2">ನೀವು ‘ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡಿದರೂ ಆ ಪ್ರಮಾಣ ಸುಳ್ಳೇ ಸುಳ್ಳು ಎನ್ನುತ್ತಾರೆ ಸರ್ವೇಶ್ವರ.</verse>
				<verse number="3">ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.</verse>
				<verse number="4">ಹೀಗಿರಲು ನಾನು, “ಈ ಜನರು ಬಡವರು, ಮೂಢರು, ಸರ್ವೇಶ್ವರನ ಮಾರ್ಗವನ್ನೂ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು.</verse>
				<verse number="5">ಆದುದರಿಂದ ಗಣ್ಯವ್ಯಕ್ತಿಗಳ ಬಳಿಗೆ ಹೋಗಿ ಮಾತಾಡುವೆನು ಅವರು ಸರ್ವೇಶ್ವರನ ಮಾರ್ಗ ಹಾಗೂ ಅವರ ದೇವರ ನ್ಯಾಯವಿಧಿಗಳನ್ನು ಬಲ್ಲವರು,” ಎಂದುಕೊಂಡೆನು. ಆದರೆ ಆ ವ್ಯಕ್ತಿಗಳು ಕೂಡ ನೊಗವನ್ನು ಮುರಿದವರು, ಕಣ್ಣಿಗಳನ್ನು ಕಿತ್ತುಬಿಟ್ಟವರು.</verse>
				<verse number="6">ಆದಕಾರಣ ಅಡವಿಯ ಸಿಂಹ ಅವರನ್ನು ಕೊಲ್ಲುವುದು ಕಾಡಿನ ತೋಳ ಕೊಳ್ಳೆಹೊಡೆಯುವುದು ಚಿರತೆ ಅವರ ಪಟ್ಟಣಗಳಿಗೆ ಹೊಂಚುಹಾಕುವುದು ಅಲ್ಲಿಂದ ಹೊರಬರುವ ಪ್ರತಿಯೊಬ್ಬನನ್ನು ಸೀಳುವುದು. ಅವರ ಅಪರಾಧಗಳೋ ಬಹಳ, ಅವರ ದ್ರೋಹಗಳೋ ಅಪಾರ!</verse>
				<verse number="7">ಸರ್ವೇಶ್ವರ ಸ್ವಾಮಿ ಹೀಗೆಂದು ಪ್ರಶ್ನಿಸುತ್ತಾರೆ; “ಎಲೈ ಜೆರುಸಲೇಮ್, ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ತೊರೆದುಬಿಟ್ಟಿದ್ದಾರೆ; ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆತುಂಬ ಊಟಕೊಟ್ಟೆ; ಅವರೋ ವ್ಯಭಿಚಾರ ಮಾಡಿದ್ದಾರೆ, ವೇಶ್ಯೆಯರ ಮನೆಗಳಲ್ಲಿ ಗುಂಪು ಸೇರಿದ್ದಾರೆ!</verse>
				<verse number="8">ಅತ್ತಿತ್ತ ಓಡಾಡುವ ಕೊಬ್ಬಿದ ಕುದುರೆಗಳಂತೆ ಅವರಲ್ಲಿ ಪ್ರತಿಯೊಬ್ಬನೂ ಕೆನೆಯುತ್ತಾನೆ ತನ್ನ ನೆರೆಯವನ ಹೆಂಡತಿಯನ್ನು ನೋಡಿ!</verse>
				<verse number="9">ಇವುಗಳ ನಿಮಿತ್ತ ನಾನು ದಂಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪವನ್ನು ತೀರಿಸದಿರುವೆನೋ?</verse>
				<verse number="10">ಆಕ್ರಮಣಕಾರರಿಗೆ ಕರೆ; ಸಿಯೋನೆಂಬ ದ್ರಾಕ್ಷಾತೋಟದ ಸಾಲುಗಿಡಗಳನ್ನು ಹಾಳುಮಾಡಿ. ಆದರೆ ಅದನ್ನು ನಿರ್ಮೂಲಮಾಡಬೇಡಿ. ಅದರ ರೆಂಬೆಗಳನ್ನು ಕಿತ್ತುಹಾಕಿ. ಅವು ಸರ್ವೇಶ್ವರನಾದ ನನಗೆ ಸೇರಿದವುಗಳಲ್ಲ.</verse>
				<verse number="11">ಇಸ್ರಯೇಲ್ ವಂಶದವರೂ ಜುದೇಯ ವಂಶದವರೂ ನನಗೆ ಬಹಳವಾಗಿ ದ್ರೋಹವೆಸಗಿದ್ದಾರೆ. ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="12">ಆ ಜನರು ಸರ್ವೇಶ್ವರ ಸ್ವಾಮಿಯನ್ನು ಅಲ್ಲಗಳೆದಿದ್ದಾರೆ. “ಆತ ಏನು ಮಾಡಿಯಾನು? ನಮಗೆ ಕೇಡು ಬರುವುದೂ ಇಲ್ಲ, ಖಡ್ಗವಾಗಲಿ, ಕ್ಷಾಮವಾಗಲಿ ನಮ್ಮ ಕಣ್ಣಿಗೆ ಬೀಳುವುದೂ ಇಲ್ಲ.</verse>
				<verse number="13">ಪ್ರವಾದಿಗಳು ಆಡುವುದೆಲ್ಲ ಬರೀ ಗಾಳಿಮಾತುಗಳು. ದೈವೋಕ್ತಿಯೆಂಬುದು ಅವುಗಳಲ್ಲಿ ಇಲ್ಲ. ಅವರಿಗೇ ತಗಲಲಿ ಅವರು ಹೇಳುವುದೆಲ್ಲ,” ಎಂದುಕೊಂಡಿದ್ದಾರೆ.</verse>
				<verse number="14">ಆದುದರಿಂದ ಸೇನಾಧೀಶ್ವರ ಸರ್ವೇಶ್ವರ ಆದ ದೇವರು ಯೆರೆಮೀಯನಿಗೆ ಹೀಗೆಂದರು: “ಇಗೋ, ಅವರು ಹೀಗೆ ಮಾತಾಡಿದ್ದರಿಂದ ನಿನ್ನ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಸುವೆನು; ಆ ಜನರನ್ನು ಅದಕ್ಕೆ ಸೌದೆಯನ್ನಾಗಿಸುವೆನು; ಆ ಬೆಂಕಿ ಅವರನ್ನು ಸುಟ್ಟುಹಾಕುವುದು.</verse>
				<verse number="15">ಇಸ್ರಯೇಲ್ ವಂಶವೇ, ಸರ್ವೇಶ್ವರ ಸ್ವಾಮಿಯ ಮಾತನ್ನು ಗಮನದಿಂದ ಕೇಳು: “ನಾನು ಒಂದು ರಾಷ್ಟ್ರವನ್ನು ದೂರದಿಂದ ನಿನ್ನ ವಿರುದ್ಧ ಬರಮಾಡುವೆನು. ಅದು ಪ್ರಾಚೀನ ಹಾಗೂ ಪ್ರಬಲ ರಾಷ್ಟ್ರ. ಅದರ ಭಾಷೆ ನಿನಗೆ ತಿಳಿಯದು. ಅದು ಆಡುವ ಮಾತು ನಿನಗೆ ಅರ್ಥವಾಗದು.</verse>
				<verse number="16">ಅದರ ಬತ್ತಳಿಕೆ ಬಾಯ್ದೆರೆದ ಗೋರಿ; ಅದರ ಯೋಧರೆಲ್ಲರು ಶೂರರು,</verse>
				<verse number="17">ಅವರು ನಿನ್ನ ದವಸಧಾನ್ಯಗಳನ್ನು ತಿಂದುಬಿಡುವರು. ನಿನ್ನ ಗಂಡುಹೆಣ್ಣುಮಕ್ಕಳನ್ನು ಕೊಲ್ಲುವರು. ನಿನ್ನ ದನಕುರಿಗಳನ್ನು ಕಬಳಿಸಿಬಿಡುವರು. ದ್ರಾಕ್ಷಾಲತೆಗಳನ್ನೂ ಅಂಜೂರದ ಗಿಡಗಳನ್ನೂ ಹಾಳುಮಾಡುವರು. ನೀನು ನಂಬಿಕೊಂಡಿರುವ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಅಸ್ತ್ರಗಳಿಂದ ಹಾಳುಮಾಡುವರು.</verse>
				<verse number="18">“ಆದರೂ ಆ ದಿನಗಳಲ್ಲಿ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲ ಮಾಡುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.</verse>
				<verse number="19">‘ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯೇ ಇವುಗಳನ್ನೆಲ್ಲ ನಮಗೇಕೆ ಮಾಡಿದ್ದಾರೆ?’ ಎಂದು ಕೇಳುವಾಗ ನೀನು ಅವರಿಗೆ, ‘ನೀವು ಸರ್ವೇಶ್ವರನನ್ನೇ ತೊರೆದು, ಸ್ವಂತನಾಡಿನಲ್ಲೆ ಅನ್ಯದೇವತೆಗಳಿಗೆ ಸೇವೆಸಲ್ಲಿಸಿದ್ದೀರಿ. ಅಂತೆಯೇ ಹೊರನಾಡಿನಲ್ಲಿ ಅನ್ಯರಿಗೆ ಸೇವೆಮಾಡುವಿರಿ’ ಎಂದು ಹೇಳು.”</verse>
				<verse number="20">ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಯಕೋಬ ಮನೆತನಕ್ಕೆ ಇದನ್ನು ಸಾರಿರಿ, ಜುದೇಯದಲ್ಲಿ ಹೀಗೆ ಪ್ರಕಟಿಸಿರಿ:</verse>
				<verse number="21">ಕಣ್ಣಿದ್ದರೂ ಕಾಣದ, ಕಿವಿಯಿದ್ದರೂ ಕೇಳದ, ಬುದ್ಧಿಯಿಲ್ಲದ ಜನರೇ, ಸರ್ವೇಶ್ವರನ ಈ ಮಾತನ್ನು ಕೇಳಿರಿ;</verse>
				<verse number="22">ನೀವು ನನಗೆ ಅಂಜುವುದಿಲ್ಲವೋ? ನನ್ನೆದುರಿಗೆ ನಡುಗುವುದಿಲ್ಲವೊ? ಕಡಲು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದವನು ನಾನು.ತೆರೆಗಳು ಅಲ್ಲಕಲ್ಲೋಲವಾದರೂ ಅದನ್ನು ಮೀರಲಾರವು. ಭೋರ್ಗರೆದರೂ ಹಾಯಲಾರವು.</verse>
				<verse number="23">ನೀವಾದರೋ ನನ್ನ ಅಧೀನದಿಂದ ತಪ್ಪಿಸಿಕೊಂಡು ಎದುರಿಬೀಳುವ ಹೃದಯವುಳ್ಳವರಾಗಿ ಇದ್ದೀರಿ. ಹದ್ದುಮೀರಿ ನನ್ನನ್ನು ಬಿಟ್ಟುಹೋಗಿ ಇದ್ದೀರಿ.</verse>
				<verse number="24">ಮುಂಗಾರು, ಹಿಂಗಾರು ಹೀಗೆ ಸಕಾಲದ ಮಳೆಯನ್ನು ಬರಮಾಡುವವನು ನಾನು. ಸುಗ್ಗಿಯ ಕ್ಲುಪ್ತವಾರಗಳನ್ನು ಪ್ರತ್ಯೇಕಿಸುವವನು ನಾನು. ಆದರೆ ನೀವು ನನ್ನಲ್ಲಿ ಭಯಭಕ್ತಿ ಇಡಲು ಮನದಲ್ಲಿ ನೆನೆಯದೆ ಇದ್ದೀರಿ.</verse>
				<verse number="25">ನಿಮ್ಮ ಅಪರಾಧಗಳು ಈ ಪ್ರಯೋಜನಗಳನ್ನು ತಡೆಗಟ್ಟಿವೆ. ನಿಮ್ಮ ಪಾಪಗಳು, ಈ ಒಳಿತು ನಿಮಗೆ ಸಿಗದಂತೆ ತಪ್ಪಿಸಿವೆ.</verse>
				<verse number="26">“ನನ್ನ ಜನರ ನಡುವೆ ಕೆಟ್ಟವರು ಕಂಡುಬಂದಿದ್ದಾರೆ. ಬೇಡರು ಹೊಂಚುಹಾಕುವ ಹಾಗೆ ಅವರು ಹೊಂಚುಹಾಕುತ್ತಾರೆ. ಬೋನೊಡ್ಡಿ ಜನರನ್ನು ಹಿಡಿಯುತ್ತಾರೆ.</verse>
				<verse number="27">ಪಂಜರಗಳಲ್ಲಿ ಪಕ್ಷಿಗಳು ತುಂಬಿರುವಂತೆ ಅವರ ಮನೆಗಳಲ್ಲಿ ಮೋಸ ವಂಚನೆಯಿಂದ ಬಂದ ಆದಾಯಗಳು ತುಂಬಿವೆ. ಇದರಿಂದ ದೊಡ್ಡ ಹಣವಂತರಾಗಿ ಇದ್ದಾರೆ.</verse>
				<verse number="28">ಕೊಬ್ಬಿ ಮೆರೆಯುತ್ತಿದ್ದಾರೆ. ಕೆಟ್ಟ ಕಾರ್ಯಗಳಲ್ಲಂತೂ ನಿಸ್ಸೀಮರಾಗಿದ್ದಾರೆ. ಅನಾಥರ ಏಳಿಗೆಗಾಗಿ ಅವರ ಪಕ್ಷ ಹಿಡಿದು ವಾದಿಸುವುದಿಲ್ಲ. ದಿಕ್ಕಿಲ್ಲದವರಿಗೆ ನ್ಯಾಯ ದೊರಕಿಸುವುದಿಲ್ಲ.</verse>
				<verse number="29">“ನಾನು ಇವುಗಳಿಗಾಗಿ ಇವರನ್ನು ದುಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪ ತೀರಿಸದೆ ಇರುವೆನೋ? ಇದು ಸರ್ವೇಶ್ವರನಾದ ನನ್ನ ನುಡಿ.</verse>
				<verse number="30">ಭೀಕರವಾದ ಹಾಗೂ ಅಸಹ್ಯವಾದ ಘಟನೆಗಳು ನಾಡಿನಲ್ಲಿ ನಡೆದುಬಂದಿವೆ.</verse>
				<verse number="31">ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”</verse>
			</chapter>
			<chapter number="6">
				<verse number="1">ಬೆನ್ಯಮೀನ್ ಕುಲದವರೇ, ಜೆರುಸಲೇಮಿನಿಂದ ವಲಸೆಹೋಗಿರಿ. ತೆಕೋವದಲ್ಲಿ ಕೊಂಬನ್ನೂದಿರಿ. ಬೇತ್‍ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಅತಿ ವಿನಾಶಕರವಾದ ವಿಪತ್ತು ಉತ್ತರದಿಂದ ತಲೆದೋರುತ್ತಿದೆ.</verse>
				<verse number="2">ಸುಂದರವೂ, ಸೊಂಪಾದ ಹಸಿರುಗಾವಲಿಗೆ ಸಮಾನವೂ ಆದ ಸಿಯೋನ್ ನಗರ ನಾಶವಾಗಲಿದೆ.</verse>
				<verse number="3">ವೈರಿಗಳಾದ ಕುರುಬರು ತಮ್ಮ ಹಿಂಡುಗಳೊಡನೆ ಅಲ್ಲಿಗೆ ಬಂದು ಅದರ ಎದುರಿಗೆ ಹಾಗೂ ಸುತ್ತಲೂ ತಮ್ಮ ಗುಡಾರಗಳನ್ನು ಹಾಕುವರು. ಪ್ರತಿಯೊಬ್ಬನೂ ತನಗೆ ಇಷ್ಟಬಂದ ಸ್ಥಳದಲ್ಲೇ ಮೇಯಿಸಿಬಿಡುವನು.</verse>
				<verse number="4">ಅವರು: “ಸಿಯೋನಿಗೆ ವಿರುದ್ಧ ಯುದ್ಧಸನ್ನದ್ಧರಾಗಿರಿ. ಏಳಿ, ನಡುಮಧ್ಯಾಹ್ನದಲ್ಲೆ ಅದರ ಮೇಲೆ ನುಗ್ಗುವ. ಅಯ್ಯೋ, ಇದೇನು ಹೊತ್ತುಮೀರಿ ಹೋಗುತ್ತಿದೆ ಅಲ್ಲಾ, ಸಂಜೆಯ ನೆರಳು ಉದ್ದುದ್ದವಾಗುತ್ತಿದೆಯಲ್ಲಾ!</verse>
				<verse number="5">ಎದ್ದು ರಾತ್ರಿಯಲ್ಲೆ ಅದರ ಮೇಲೆ ಬಿದ್ದು ಅಲ್ಲಿನ ಅರಮನೆಗಳನ್ನು ಹಾಳುಮಾಡೋಣ,” ಎಂದುಕೊಳ್ಳುತ್ತಿದ್ದಾರೆ.</verse>
				<verse number="6">ಸರ್ವಶಕ್ತನಾದ ಸರ್ವೇಶ್ವರ ಸ್ವಾಮಿ ಹೀಗೆ ಎನ್ನುತ್ತಾರೆ: “ಸಿಯೋನ್ ಸುತ್ತಣ ಮರಗಳನ್ನು ಕಡಿದುಬಿಡಿ. ಜೆರುಸಲೇಮ್ ಎದುರಿಗೆ ದಿಬ್ಬಗಳನ್ನು ಎಬ್ಬಿಸಿರಿ. ನೀವು ದಂಡಿಸಬೇಕಾದ ನಗರ ಇದುವೆ. ದರೋಡೆ ದಬ್ಬಾಳಿಕೆಗಳಿಂದ ಅದು ತುಂಬಿದೆ.</verse>
				<verse number="7">ತೊಟ್ಟಿ ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ನಗರ ತನ್ನಲ್ಲಿನ ನೀಚತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಇಲ್ಲಿಂದ ಕೇಳಿಬರುವುದೆಲ್ಲ ಹಿಂಸಾಚಾರದ ಹಾಗೂ ಕೊಳ್ಳೆಯ ಸುದ್ದಿಯೆ. ರೋಗ ರುಜಿನಗಳೂ ಗಾಯಹುಣ್ಣುಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತಿವೆ.</verse>
				<verse number="8">ಜೆರುಸಲೇಮ್, ಎಚ್ಚರಿಕೆಯಿಂದ ನಡೆದುಕೊ. ಇಲ್ಲವಾದರೆ ನಾನು ನಿನ್ನನ್ನು ಅಗಲಿಬಿಡುವೆನು. ನಿನ್ನನ್ನು ಪಾಳುಬಿದ್ದ ನಿರ್ಜನ ಪ್ರದೇಶವಾಗಿಸುವೆನು.”</verse>
				<verse number="9">ಸರ್ವಶಕ್ತರಾದ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು: “ಇಸ್ರಯೇಲಿನ ಅಳಿದುಳಿದವರನ್ನು ದ್ರಾಕ್ಷಿಯ ಹಕ್ಕಲನ್ನೋ ಎಂಬಂತೆ ಆಯ್ದುಕೊ. ದ್ರಾಕ್ಷಿಯ ಹಣ್ಣನ್ನು ಕೀಳುವವನಂತೆ ನಿನ್ನ ಕೈಯನ್ನು ಮತ್ತೆ ರೆಂಬೆಗಳಿಗೆ ಹಾಕು.”</verse>
				<verse number="10">ಅದಕ್ಕೆ ನಾನು, “ಅಯ್ಯೋ! ಯಾರ ಸಂಗಡ ನಾನು ಮಾತಾಡಿ ಅವರು ಗಮನಿಸುವಂತೆ ಮಾಡಲಿ? ಅವರ ಕಿವಿ ಮಂದ. ಅವರು ಕೇಳಿಸಿಕೊಳ್ಳುವುದಿಲ್ಲ. ಸರ್ವೇಶ್ವರ ಆದ ನಿಮ್ಮ ಮಾತು ಎಂದರೆ ಅವರಿಗೆ ತಿರಸ್ಕಾರ. ಅದು ಅವರಿಗೆ ರುಚಿಸುವುದಿಲ್ಲ.</verse>
				<verse number="11">ಆದಕಾರಣವೇ ನಿಮ್ಮ ಕೋಪ ನನ್ನಲ್ಲೂ ತುಂಬಿತುಳುಕುತ್ತಿದೆ. ಅದನ್ನು ತಡೆದು ನನಗೆ ಸಾಕಾಗಿದೆ,” ಎಂದೆನು. ಆಗ ಸರ್ವೇಶ್ವರ ನನಗೆ: “ಹಾಗಾದರೆ ಆ ಕೋಪವನ್ನು ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಕೂಟ಼ಗಳ ಮೇಲೂ ಕಾರಿಬಿಡು. ಗಂಡಹೆಂಡತಿಯರನ್ನೂ ಮುದುಕರನ್ನೂ ವಯೋವೃದ್ಧರನ್ನೂ ಅಪಹರಿಸಲಾಗುವುದು.</verse>
				<verse number="12">ಅವರ ಹೆಂಡತಿ, ಮನೆ, ಹೊಲ, ಗದ್ದೆ ಎಲ್ಲವೂ ಅನ್ಯರ ಪಾಲಾಗುವುದು.” “ನಾಡಿನ ನಿವಾಸಿಗಳ ಮೇಲೆ ಕೈಮಾಡುವೆನೆಂಬುದು ಖಚಿತ. ಇದು ಸರ್ವೇಶ್ವರನಾದ ನನ್ನ ನುಡಿ.</verse>
				<verse number="13">ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾ ಇದ್ದಾರೆ.</verse>
				<verse number="14">ಅವರು, ನನ್ನ ಜನರ ಗಾಯಗಳು ಗುಣವಾಗದಿದ್ದರೂ ಅವು ಕೇವಲ ಮಚ್ಚೆಗಳೋ ಎಂಬಂತೆ ‘ಎಲ್ಲ ಚೆನ್ನಾಗಿದೆ’ ಎಂದು ಸಮಾಧಾನ ಹೇಳಿ ವಂಚಿಸುತ್ತಿದ್ದಾರೆ.</verse>
				<verse number="15">ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಅವರಿಗೆ ಲಜ್ಜೆಯ ಗಂಧವೂ ಇಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ,” ಎಂದರು.</verse>
				<verse number="16">ಸರ್ವೇಶ್ವರ ಸ್ವಾಮಿ ತಮ್ಮ ಜನರಿಗೆ: “ನೀವು ದಾರಿಗಳು ಕೂಡುವ ಸ್ಥಳಗಳಲ್ಲಿ ನಿಂತು ನೋಡಿ. ಸನಾತನ ಮಾರ್ಗಗಳು ಯಾವುವು? ಸನ್ಮಾರ್ಗ ಎಲ್ಲಿದೆ? ಎಂದು ವಿಚಾರಿಸಿರಿ. ಅದರಲ್ಲೆ ಮುನ್ನಡೆಯಿರಿ. ಆಗ ನಿಮಗೆ ಮನನೆಮ್ಮದಿ ದೊರಕುವುದು.” ಆದರೆ ಆ ಜನರು: “ಇಲ್ಲ, ನಾವು ಅದರಲ್ಲಿ ನಡೆಯುವುದೇ ಇಲ್ಲ” ಎಂದರು.</verse>
				<verse number="17">ಸರ್ವೇಶ್ವರ ಸ್ವಾಮಿ ಕಾವಲುಗಾರರನ್ನು ನೇಮಿಸಿ, “ಕಹಳೆಯ ಕೂಗನ್ನು ಕೇಳಿ” ಎಂದರು. ಅವರು “ಇಲ್ಲ, ಕೇಳುವುದಿಲ್ಲ” ಎಂದು ಉತ್ತರಿಸಿದರು.</verse>
				<verse number="18">ಆದುದರಿಂದ ಸರ್ವೇಶ್ವರ: “ರಾಷ್ಟ್ರಗಳೇ ಆಲಿಸಿ. ನನ್ನ ಜನರಿಗೆ ಸಂಭವಿಸಲಿರುವುದನ್ನು ಗಮನಿಸಿ.</verse>
				<verse number="19">ಜಗವೇ ಕೇಳು. ಇದೋ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದಾರೆ. ಆದ್ದರಿಂದ ಅವರ ಮೇಲೆ ಕೇಡನ್ನು ಬರಮಾಡುವೆನು. ಅವರ ಯೋಜನೆಗಳಿಗೆ ಅದೇ ತಕ್ಕ ಪ್ರತಿಫಲ.</verse>
				<verse number="20">ಅವರು ಶೆಬದ ಧೂಪವನ್ನಾಗಲಿ, ದೂರದೇಶದ ಒಳ್ಳೆಯ ಸುಗಂಧವನ್ನಾಗಲಿ ತಂದು ನನಗೆ ಅರ್ಪಿಸುವುದರಿಂದ ನನಗೆ ಏನೂ ಪ್ರಯೋಜನವಿಲ್ಲ. ಅವರು ಒಪ್ಪಿಸುವ ದಹನಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಯಜ್ಞಬಲಿಗಳೂ ನನಗೆ ಇಷ್ಟವಿಲ್ಲ.</verse>
				<verse number="21">ಆದಕಾರಣ ಈ ಜನರಿಗೆ ಅಡ್ಡಿಆತಂಕಗಳನ್ನು ಒಡ್ಡುವೆನು. ಹೆತ್ತವರೂ ಮಕ್ಕಳೂ ಎಡವಿಬೀಳುವರು, ನೆಂಟರಿಷ್ಟರೂ ನಾಶವಾಗಿ ಹೋಗುವರು. ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="22">ಮತ್ತೆ ಸರ್ವೇಶ್ವರ ಸ್ವಾಮಿ, “ಇಗೋ, ಉತ್ತರದಿಂದ ಒಂದು ರಾಷ್ಟ್ರ ಬರುತ್ತಿದೆ. ಅದು ಮಹಾ ಬಲಿಷ್ಠ ರಾಷ್ಟ್ರ. ಜಗದ ಕಟ್ಟಕಡೆಯಿಂದ ಹೊರಟುಬರುತ್ತಿದೆ.</verse>
				<verse number="23">ಅವರು ಬಿಲ್ಲನ್ನೂ ಈಟಿಯನ್ನೂ ಹಿಡಿದಿದ್ದಾರೆ. ಅವರು ಕ್ರೂರಿಗಳು, ನಿಷ್ಕರುಣಿಗಳು. ಅವರ ಧ್ವನಿ ಸಮುದ್ರದಂತೆ ಭೋರ್ಗರೆಯುತ್ತಿದೆ. ಕುದುರೆಗಳನ್ನು ಏರಿದ್ದಾರೆ. ಎಲೌ ಸಿಯೋನ್ ನಗರಿಯೇ, ಆ ಶತ್ರುಸೈನ್ಯ ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ.”</verse>
				<verse number="24">ಜೆರುಸಲೇಮಿನ ಜನರು: “ಈ ಸುದ್ದಿಯನ್ನು ಕೇಳಿದಾಗ ನಮ್ಮ ಕೈಗಳು ಜೋಲುಬಿದ್ದುವು. ಪ್ರಸವವೇದನೆಯಂಥ ಯಾತನೆ ನಮ್ಮನ್ನು ಆವರಿಸಿತು.</verse>
				<verse number="25">ಊರ ಹೊರಗೆ ಹೋಗುವಂತಿಲ್ಲ, ದಾರಿಯಲ್ಲಿ ನಡೆಯುವಂತಿಲ್ಲ. ಸುತ್ತಮುತ್ತಲೂ ಶತ್ರುವಿನ ಕತ್ತಿ, ಎಲ್ಲೆಲ್ಲೂ ದಿಗಿಲು ಎಂದರೆ ದಿಗಿಲು!”</verse>
				<verse number="26">ಸರ್ವೇಶ್ವರ ಜನರಿಗೆ: “ನನ್ನ ಪ್ರಜೆಯೆಂಬ ಕುವರಿಯೇ, ಗೋಣಿತಟ್ಟನ್ನು ಸುತ್ತಿಕೊ, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದ ಒಬ್ಬನೇ ಮಗನನ್ನು ಕಳೆದುಕೊಂಡವಳಂತೆ ದುಃಖಪಟ್ಟು ಘೋರವಾಗಿ ಪ್ರಲಾಪಮಾಡು. ಕೊಳ್ಳೆಗಾರ ತಟ್ಟನೆ ನಿನ್ನ ಮೇಲೆ ಬೀಳಲಿದ್ದಾನೆ ಎಂಬುದನ್ನು ಮನದಲ್ಲಿಡು.”</verse>
				<verse number="27">ಸರ್ವೇಶ್ವರ ಯೆರೆಮೀಯನಿಗೆ ಹೀಗೆ ಎಂದರು: “ನಿನ್ನನ್ನು ನನ್ನ ಜನವೆಂಬ ಅದುರಿಗೆ ಶೋಧಕನನ್ನಾಗಿ ನೇಮಿಸಿದ್ದೇನೆ. ನೀನು ಅವರ ನಡತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳಬೇಕು.</verse>
				<verse number="28">ಅವರೆಲ್ಲರು ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ತಾಮ್ರ, ಕಬ್ಬಿಣಕ್ಕೆ ಸಮಾನರು, ಎಲ್ಲರೂ ಕೇಡಿಗರು.</verse>
				<verse number="29">ತಿದಿ ಬುಸುಬುಸುಗುಟ್ಟುತ್ತದೆ. ಸೀಸ ಉರಿಯಿಂದ ಸುಟ್ಟುಹೋಗುತ್ತದೆ. ಅಕ್ಕಸಾಲಿಗನು ಎಷ್ಟು ಶೋಧಿಸಿದರೂ ಅವನ ಶ್ರಮವೆಲ್ಲ ವ್ಯರ್ಥ. ಏಕೆಂದರೆ ಕಲ್ಮಷವನ್ನು ಅವನಿಂದ ತೆಗೆಯಲಾಗಲಿಲ್ಲ.</verse>
				<verse number="30">ಸರ್ವೇಶ್ವರ ಆದ ನಾನು ಅವರನ್ನು ತಳ್ಳಿಬಿಟ್ಟಿರುವುದರಿಂದ ಅವರು ಕಂದುಬೆಳ್ಳಿ ಎನಿಸಿಕೊಳ್ಳುವರು.”</verse>
			</chapter>
			<chapter number="7">
				<verse number="1">ಸರ್ವೇಶ್ವರ ಯೆರೆಮೀಯನಿಗೆ ಹೇಳಿದ ಮಾತು:</verse>
				<verse number="2">“ನೀನು ನನ್ನ ಆಲಯದ ಬಾಗಿಲಲ್ಲಿ ನಿಂತು ಈ ವಾಕ್ಯವನ್ನು ಸಾರು - ‘ಸರ್ವೇಶ್ವರ ಸ್ವಾಮಿಗೆ ಅಡ್ಡಬೀಳಲು ಈ ದ್ವಾರಗಳನ್ನು ಪ್ರವೇಶಿಸುವ ಎಲ್ಲ ಯೆಹೂದ್ಯರೇ, ಸರ್ವೇಶ್ವರನ ನುಡಿಯನ್ನು ಕೇಳಿ;</verse>
				<verse number="3">ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ನೀವು ನಿಮ್ಮ ನಡತೆಯನ್ನೂ ಕೃತ್ಯಗಳನ್ನೂ ತಿದ್ದುಕೊಳ್ಳಿ. ಹಾಗೆ ಮಾಡಿದರೆ ನಾನು ನಿಮ್ಮನ್ನು ಈ ಸ್ಥಳದಲ್ಲಿ ನೆಲೆಗೊಳಿಸುವೆನು.</verse>
				<verse number="4">‘ಇದು ಸರ್ವೇಶ್ವರನ ಗರ್ಭಗುಡಿ, ಸರ್ವೇಶ್ವರನ ಗರ್ಭಗುಡಿ, ಸರ್ವೇಶ್ವರನ ಗರ್ಭಗುಡಿ, (ಆದುದರಿಂದ ಎಲ್ಲ ಸುಭದ್ರ)’ ಎಂಬ ಮೋಸಕರ ಮಾತುಗಳಲ್ಲಿ ಭರವಸೆ ಇಡಬೇಡಿ.</verse>
				<verse number="5">“ನೀವು ನಿಮ್ಮ ನಡೆಯನ್ನೂ ಕೃತ್ಯಗಳನ್ನೂ ಪೂರ್ತಿಯಾಗಿ ತಿದ್ದುಕೊಳ್ಳಿ. ಒಬ್ಬರು ಮತ್ತೊಬ್ಬರೊಡನೆ ನ್ಯಾಯನೀತಿಯಿಂದ ವರ್ತಿಸಿರಿ.</verse>
				<verse number="6">ಅನ್ಯರನ್ನಾಗಲಿ, ಅನಾಥರನ್ನಾಗಲಿ, ವಿಧವೆಯರನ್ನೇ ಆಗಲಿ ಶೋಷಣೆಗೆ ಗುರಿಪಡಿಸಬೇಡಿ! ಇಲ್ಲೆಲ್ಲೂ ನಿರ್ದೋಷಿಗಳ ರಕ್ತವನ್ನು ಸುರಿಸಬೇಡಿ. ನಿಮಗೆ ಹಾನಿಕರವಾದ ಅನ್ಯದೇವತಾ ಭಕ್ತಿಯನ್ನು ಬಿಟ್ಟುಬಿಡಿ.</verse>
				<verse number="7">ಆಗ ನಾನು ನಿಮ್ಮನ್ನು ಈ ಸ್ಥಳದಲ್ಲೆ ನೆಲೆಗೊಳಿಸುವೆನು. ನಿಮ್ಮ ಪೂರ್ವಜರಿಗೆ ನಾನು ಶಾಶ್ವತವಾಗಿ ದಯಪಾಲಿಸಿದ ಈ ನಾಡಿನಲ್ಲೆ ನೆಲೆಗೊಳಿಸುವೆನು.”</verse>
				<verse number="8">ನಿಷ್ಪ್ರಯೋಜಕವಾದ ಹಾಗೂ ಮೋಸದ ಮಾತುಗಳಲ್ಲಿ ನೀವು ಭರವಸೆ ಇಟ್ಟಿದ್ದೀರಿ.</verse>
				<verse number="9">ಕಳವು, ಕೊಲೆ, ವ್ಯಭಿಚಾರಗಳನ್ನು ಮಾಡುತ್ತೀರಿ. ಸುಳ್ಳುಸಾಕ್ಷಿ ಹೇಳುತ್ತೀರಿ. ಬಾಳನಿಗೆ ಧೂಪಾರತಿ ಎತ್ತುತ್ತೀರಿ. ಕಂಡು ಕೇಳದ ಅನ್ಯದೇವತೆಗಳನ್ನು ಆರಾಧಿಸುತ್ತೀರಿ.</verse>
				<verse number="10">ನನ್ನ ಹೆಸರು ಪಡೆದಿರುವ ಈ ದೇವಾಲಯಕ್ಕೆ ಬಂದು ನನ್ನ ಸನ್ನಿಧಿಯಲ್ಲಿ ನಿಂತು - ‘ನಾವು ಸುರಕ್ಷಿತರು’ ಎನ್ನುತ್ತೀರಿ. ಈ ಎಲ್ಲ ಅಸಹ್ಯಕಾರ್ಯಗಳನ್ನು ನಡೆಸುವುದಕ್ಕೋ ಈ ಸುರಕ್ಷತೆ?</verse>
				<verse number="11">ನನ್ನ ಹೆಸರಿನಲ್ಲಿ ಕಟ್ಟಿರುವ ದೇವಾಲಯ ನಿಮ್ಮ ದೃಷ್ಟಿಗೆ ಕಳ್ಳರ ಗುಹೆ ಆಗಿದೆಯೋ? ಹೌದು, ಇದನ್ನೆಲ್ಲ ನಾನೆ ಖುದ್ದಾಗಿ ನೋಡಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.</verse>
				<verse number="12">ನಾನು ನನ್ನ ನಾಮವನ್ನು ಮೊದಲು ಪ್ರತಿಷ್ಠಾಪಿಸಿದ ‘ಶಿಲೊ’ ಎಂಬ ಸ್ಥಾನಕ್ಕೆ ಹೋಗಿ ನೋಡಿ. ನನ್ನ ಜನ ಇಸ್ರಯೇಲರ ಅಧರ್ಮದ ನಿಮಿತ್ತ ಆ ಸ್ಥಳಕ್ಕೆ ತಂದ ಗತಿಯನ್ನು ಹೋಗಿ ನೋಡಿ.</verse>
				<verse number="13">ನಾನು ತಡಮಾಡದೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಓಗೊಡದೆ, ಈ ಕೃತ್ಯಗಳನ್ನೆಲ್ಲ ಮಾಡಿದ್ದೀರಿ.</verse>
				<verse number="14">ಈ ಕಾರಣ ನನ್ನ ನಾಮಕ್ಕೆ ನೆಲೆಯಾದ ಹಾಗು ನಿಮ್ಮ ಭರವಸೆಗೆ ಆಧಾರವಾದ ಈ ದೇವಾಲಯಕ್ಕೆ, ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ಈ ಸ್ಥಳಕ್ಕೆ ನಾನು ಶಿಲೋಗೆ ಬರಮಾಡಿದ ಗತಿಯನ್ನೇ ಬರಮಾಡುವೆನು.</verse>
				<verse number="15">ನಿಮ್ಮ ಬಂಧುಬಳಗದವರನ್ನು ಅಂದರೆ, ಇಡಿ ಎಫ್ರಯಿಮ್ ವಂಶದವರನ್ನು ತೊಲಗಿಸಿಬಿಟ್ಟಂತೆ, ನಿಮ್ಮನ್ನೂ ನನ್ನ ಸನ್ನಿಧಿಯಿಂದ ತೊಲಗಿಸುವೆನು.”</verse>
				<verse number="16">“ಯೆರೆಮೀಯನೇ, ನೀನಂತು ಈ ಜನರಿಗಾಗಿ ಬೇಡಿಕೊಳ್ಳಬೇಡ. ಇವರ ಪರವಾಗಿ ಮೊರೆ ಇಡಬೇಡ. ಪ್ರಾರ್ಥಿಸಲೂ ಬೇಡ, ನನ್ನ ಬಳಿ ವಿಜ್ಞಾಪಿಸಲೂ ಬೇಡ. ನಾನು ಅದನ್ನು ಕೇಳಲಾರೆ.</verse>
				<verse number="17">ಇವರು ಜುದೇಯ ಪಟ್ಟಣಗಳಲ್ಲೂ ಜೆರುಸಲೇಮಿನ ಬೀದಿಗಳಲ್ಲೂ ಮಾಡುವುದನ್ನು ನೀನೆ ನೋಡಿರುವೆ ಅಲ್ಲವೆ?</verse>
				<verse number="18">‘ಗಗನದೊಡತಿ’ ಎಂದು ಇವರು ಕರೆದ ದೇವತೆಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಅವರ ಮಕ್ಕಳು ಸೌದೆಯನ್ನು ಆಯ್ದು ತರುತ್ತಾರೆ. ಗಂಡಸರು ಬೆಂಕಿ ಹೊತ್ತಿಸುತ್ತಾರೆ. ಹೆಂಗಸರು ಹಿಟ್ಟನ್ನು ನಾದುತ್ತಾರೆ. ನನ್ನನ್ನು ಕೆಣಕಬೇಕೆಂದೇ ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ.</verse>
				<verse number="19">ಇವರು ಮಾಡುತ್ತಿರುವ ಕೇಡು ನನಗೋ? ಲಜ್ಜೆಯಿಂದ ಮುಖಮುಚ್ಚಿಕೊಳ್ಳುವಷ್ಟು ಕೇಡನ್ನು ತಮಗೆ ತಾವೇ ತಂದುಕೊಳ್ಳುತ್ತಿದ್ದಾರಲ್ಲವೆ?” ಎನ್ನುತ್ತಾರೆ ಸರ್ವೇಶ್ವರ.</verse>
				<verse number="20">“ಸರ್ವೇಶ್ವರನಾದ ನಾನು ಹೇಳುವುದನ್ನು ಗಮನಿಸಿರಿ; ಇಗೋ, ನನ್ನ ಕೋಪವೆಂಬ ರೋಷಾಗ್ನಿಯನ್ನು ಈ ಸ್ಥಳದ ಮೇಲೆ ಸುರಿಸುವೆನು. ನರಮಾನವರ ಮೇಲೂ ಪಶುಪ್ರಾಣಿಗಳ ಮೇಲೂ ಕಾಡುಮರಗಳ ಮೇಲೂ ಭೂಮಿಯ ಬೆಳೆಯ ಮೇಲೂ ಅದನ್ನು ಕಾರುವೆನು. ಅದು ಆರದೆ ದಹಿಸುವುದು!”</verse>
				<verse number="21">ಇಸ್ರಯೇಲಿನ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ ಇದು: “ನೀವು ಅರ್ಪಿಸುವ ದಹನಬಲಿಗಳನ್ನು, ಸಾಧಾರಣ ಯಜ್ಞಬಲಿಗಳೆಂದು ಭಾವಿಸಿ ಅವುಗಳ ಮಾಂಸವನ್ನು ಕೂಡ ನೀವೇ ತಿನ್ನಿರಿ.</verse>
				<verse number="22">ನಿಮ್ಮ ಪೂರ್ವಜರನ್ನು ಈಜಿಪ್ಟ್ ದೇಶದಿಂದ ಬರಮಾಡಿದಾಗ ದಹನಬಲಿಯ ವಿಷಯವಾಗಿಯಾಗಲಿ, ಯಜ್ಞಬಲಿಯ ವಿಷಯವಾಗಿಯಾಗಲಿ ನಾನು ಅವರಿಗೆ ಏನೂ ಹೇಳಲಿಲ್ಲ; ಯಾವ ಕಟ್ಟಳೆಯನ್ನೂ ಕೊಡಲಿಲ್ಲ.</verse>
				<verse number="23">ನಾನು ಕೊಟ್ಟ ಒಂದು ಕಟ್ಟಳೆಯೆಂದರೆ ಇದು - ನನ್ನ ಮಾತಿಗೆ ಕಿವಿಗೊಡಿ, ನಾನು ನಿಮ್ಮ ದೇವರಾಗಿರುತ್ತೇನೆ, ನೀವು ನನ್ನ ಪ್ರಜೆಯಾಗಿರಿ. ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೆ ನಡೆಯಿರಿ.</verse>
				<verse number="24">ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಸ್ವಂತ ಆಲೋಚನೆಗಳನ್ನು ಅನುಸರಿಸಿದರು. ತಮ್ಮ ದುಷ್ಟಹೃದಯದ ನಿಮಿತ್ತ ಹಟಮಾರಿಗಳಂತೆ ನಡೆದುಕೊಂಡರು. ಮುಂದೆ ಸಾಗದೆ ಹಿಂದಿರುಗಿಯೇ ಹೋದರು.</verse>
				<verse number="25">ನಿಮ್ಮ ಪೂರ್ವಜರು ಈಜಿಪ್ಟ್ ದೇಶದಿಂದ ಹೊರಟದಿನ ಮೊದಲುಗೊಂಡು ಈ ದಿನದವರೆಗೂ ನನ್ನ ದಾಸರಾದ ಎಲ್ಲ ಪ್ರವಾದಿಗಳನ್ನು ನಿಮ್ಮವರ ಬಳಿಗೆ ಕಳಿಸುತ್ತಾ ಬಂದು ಇದ್ದೇನೆ. ದಿನದಿನವೂ ತಡಮಾಡದೆ ಕಳಿಸಿದ್ದೇನೆ.</verse>
				<verse number="26">ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ. ನನ್ನ ಆಜ್ಞೆಗೆ ಮಣಿಯಲಿಲ್ಲ. ತಮ್ಮ ಪೂರ್ವಜರಿಗಿಂತಲೂ ಕೆಟ್ಟವರಾಗಿ ನಡೆದುಕೊಂಡರು.”</verse>
				<verse number="27">“ಯೆರೆಮೀಯನೇ, ನೀನು ಈ ಮಾತುಗಳನ್ನು ಅವರಿಗೆ ಹೇಳಿದರೂ ಅವರು ಕಿವಿಗೊಡುವುದಿಲ್ಲ, ಕರೆದರೂ ಅವರು ಓಗೊಡುವುದಿಲ್ಲ.</verse>
				<verse number="28">ಆದಕಾರಣ ನೀನು ಅವರಿಗೆ - ‘ತನ್ನ ದೇವರಾದ ಸರ್ವೇಶ್ವರನ ಮಾತಿಗೆ ಕಿವಿಗೊಡದ, ದಂಡಿಸಿದರೂ ತಿದ್ದುಕೊಳ್ಳದ ಜನಾಂಗ ಇದುವೇ; ಸತ್ಯವೆಂಬುದು ಅಳಿದುಹೋಗಿದೆ, ಇದರ ಬಾಯಿಂದ ಕಡಿದುಹೋಗಿದೆ’ ಎಂದು ಹೇಳು.”</verse>
				<verse number="29">“ಎಲೈ ಜೆರುಸಲೇಮೇ! ತಲೆಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಡು ಬೋಳುಗುಡ್ಡಗಳಲ್ಲಿ ಶೋಕಗೀತೆಯನ್ನು ಹಾಡು. ಏಕೆಂದರೆ ಸರ್ವೇಶ್ವರನಾದ ನಾನು ಕೋಪಗೊಂಡು, ನಿರಾಕರಿಸಿ, ತ್ಯಜಿಸಿಬಿಟ್ಟಿದ್ದೇನೆ ಈ ವಂಶವನ್ನು,”</verse>
				<verse number="30">ಸರ್ವೇಶ್ವರನ ನುಡಿ: “ಯೆಹೂದ್ಯರು ನನ್ನ ಚಿತ್ತಕ್ಕೆ ವಿರುದ್ಧವಾದುದನ್ನೆ ಮಾಡಿದ್ದಾರೆ. ನನ್ನ ಹೆಸರಿನಿಂದ ಪ್ರಖ್ಯಾತಗೊಂಡ ದೇವಾಲಯದಲ್ಲಿ ತಮ್ಮ ಅಸಹ್ಯವಸ್ತುಗಳನ್ನು ಇಟ್ಟು ಅದನ್ನು ಹೊಲೆಮಾಡಿದ್ದಾರೆ.</verse>
				<verse number="31">ತಮ್ಮ ಗಂಡುಹೆಣ್ಣು ಮಕ್ಕಳನ್ನೂ ಆಹುತಿಕೊಡುವುದಕ್ಕೆ ಬೆನ್‍ಹಿನ್ನೋಮ್ ಕಣಿವೆಯಲ್ಲಿನ ತೋಫೆತೆಂಬ ಬಲಿಪೀಠವನ್ನು ಕಟ್ಟಿದ್ದಾರೆ. ಇಂಥ ಕಾರ್ಯವನ್ನು ನಾನು ವಿಧಿಸಿಲ್ಲ. ಅದು ನನ್ನ ಮನಸ್ಸಿಗೂ ಸುಳಿದಿಲ್ಲ.</verse>
				<verse number="32">ಆದ್ದರಿಂದ ಇಗೋ, ಆ ಕಣಿವೆಗೆ ತೋಫೆತ್ ಮತ್ತು ಬೆನ್‍ಹಿನ್ನೋಮ್ ಎಂಬ ಹೆಸರುಗಳು ಹೋಗಿ ಸಂಹಾರದ ಕಣಿವೆ ಎಂದು ಕರೆಯಲಾಗುವ ದಿನಗಳು ಬರಲಿವೆ. ಇನ್ನೆಲ್ಲೂ ಸ್ಥಳವಿಲ್ಲವಾಗಿ ಶವಗಳನ್ನು ಆ ತೋಫೆತಿನಲ್ಲಿ ಹೂಣುವರು.</verse>
				<verse number="33">ಈ ಜನರ ಹೆಣಗಳು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವುವು. ಅವುಗಳನ್ನು ಬೆದರಿಸಿ ಓಡಿಸಲು ಯಾರೂ ಇರುವುದಿಲ್ಲ.</verse>
				<verse number="34">ಜುದೇಯದ ಪಟ್ಟಣಗಳಲ್ಲಿಯೂ ಜೆರುಸಲೇಮಿನ ಬೀದಿಗಳಲ್ಲಿಯೂ ಹರ್ಷಾಡಂಬರಗಳು ಕೇಳಿಬರುವುದಿಲ್ಲ. ವಧೂವರರ ಸೊಲ್ಲನ್ನು ನಿಲ್ಲಿಸಿಬಿಡುವೆನು, ನಾಡಿಗೆ ನಾಡೇ ಹಾಳಾಗುವುದು. ಇದು ಸರ್ವೇಶ್ವರನಾದ ನನ್ನ ನುಡಿ.”</verse>
			</chapter>
			<chapter number="8">
				<verse number="1">“ಆ ಕಾಲ ಬಂದಾಗ ಜುದೇಯದ ಅರಸರು, ಅಧಿಪತಿಗಳು, ಯಾಜಕರು, ಪ್ರವಾದಿಗಳು ಹಾಗು ಜೆರುಸಲೇಮಿನ ನಿವಾಸಿಗಳು ಇವರೆಲ್ಲರ ಎಲುಬುಗಳನ್ನು ಗೋರಿಯಿಂದ ಅಗೆದು ತೆಗೆದುಬಿಡುವರು.</verse>
				<verse number="2">ಅವರು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ, ಪೂಜಿಸಿದ ಸೂರ್ಯ,‍ ಚಂದ್ರ, ತಾರಾಗಣಗಳ ಎದುರಿಗೇ ಆ ಎಲುಬುಗಳನ್ನು ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುವುವು.</verse>
				<verse number="3">ಈ ಕೆಟ್ಟ ವಂಶದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು. ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="4">ನೀನು ಅವರಿಗೆ ಹೀಗೆ ಹೇಳಬೇಕು: “ಸರ್ವೇಶ್ವರ ಇಂತೆನ್ನುತ್ತಾರೆ: ಬಿದ್ದವರು ಮತ್ತೆ ಏಳುತ್ತಾರಲ್ಲವೆ? ಬಿಟ್ಟುಹೋದವನು ತಿರುಗಿಬರುತ್ತಾನಲ್ಲವೆ?</verse>
				<verse number="5">ಈ ಜೆರುಸಲೇಮಿನವರು ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ. ಹಿಂತಿರುಗಿ ಬರಲೊಲ್ಲರು.</verse>
				<verse number="6">ನಾನು ಕಿವಿಗೊಟ್ಟು ಕೇಳಿದೆ. ಅವರು ಸತ್ಯವಾದುದನ್ನು ನುಡಿಯುತ್ತಿರಲಿಲ್ಲ. ಯಾವನೂ ತನ್ನ ಅಕ್ರಮಕ್ಕಾಗಿ ಪಶ್ಚಾತ್ತಾಪಪಟ್ಟು, ‘ಅಯ್ಯೋ ನಾನು ಎಂಥ ಕೆಲಸ ಮಾಡಿಬಿಟ್ಟೆ!’ ಎಂದುಕೊಳ್ಳುತ್ತಿರಲಿಲ್ಲ. ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಗಳಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗದಲ್ಲೆ ದೌಡಾಯಿಸುತ್ತಿದ್ದಾನೆ.</verse>
				<verse number="7">ಆಕಾಶದಲ್ಲಿ ಹಾರುವ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿದುಕೊಂಡಿದೆ. ಬೆಳವಕ್ಕಿ, ಬಾನಕ್ಕಿ, ಕೊಕ್ಕರೆ ಇವು ತಮ್ಮ ಗಮನಾಗಮನದ ಸಮಯಗಳನ್ನು ತಿಳಿದಿರುತ್ತವೆ. ಆದರೆ ನನ್ನ ಜನರು ಸರ್ವೇಶ್ವರನಾದ ನನ್ನ ನಿಯಮಗಳನ್ನೆ ತಿಳಿಯರು.</verse>
				<verse number="8">‘ನಾವು ಜ್ಞಾನಿಗಳು. ಸರ್ವೇಶ್ವರನ ಧರ್ಮಶಾಸ್ತ್ರ ನಮ್ಮಲ್ಲಿದೆ’ ಎಂದು ನೀವು ಹೇಗೆ ತಾನೇ ಹೇಳಬಲ್ಲಿರಿ? ಧರ್ಮಶಾಸ್ತ್ರಿಗಳ ಸುಳ್ಳು ಲೇಖನಿ ಅದನ್ನು ಸುಳ್ಳನ್ನಾಗಿ ಮಾಡಿದೆ.</verse>
				<verse number="9">ಜ್ಞಾನಿಗಳು ನಾಚಿಕೆಪಡುವರು, ನಿಬ್ಬೆರಗಾಗಿ ಬೋನಿಗೆ ಸಿಕ್ಕಿಬೀಳುವರು. ಏಕೆಂದರೆ ಸರ್ವೇಶ್ವರನಾದ ನನ್ನ ಮಾತನ್ನು ಅವರು ನಿರಾಕರಿಸಿದ್ದಾರೆ. ಇದು ತಾನೋ ಅವರ ಜ್ಞಾನ?</verse>
				<verse number="10">ಆದುದರಿಂದಲೇ ಇವರ ಹೆಂಡತಿಯರನ್ನು ಅನ್ಯರಿಗೂ ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಅನ್ಯಾಯವಾಗಿ ದೋಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.</verse>
				<verse number="11">ನನ್ನ ಜನರ ಗಾಯಗಳು ಗುಣವಾಗದಿದ್ದರೂ ಅವು ಮಚ್ಚೆಗಳೋ ಎಂಬಂತೆ ‘ಎಲ್ಲ ಚೆನ್ನಾಗಿದೆ’ ಎಂದು ಸಮಾಧಾನ ಹೇಳಿ ವಂಚಿಸುತ್ತಿದ್ದಾರೆ.</verse>
				<verse number="12">ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾಗಿದ್ದರೂ ಎಳ್ಳಷ್ಟೂ ನಾಚಿಕೆ ಇಲ್ಲದಿದ್ದಾರೆ. ಲಜ್ಜೆಯ ಗಂಧವೂ ಅವರಿಗಿಲ್ಲ. ಆದಕಾರಣ ಬೇರೆಯವರಂತೆ ಅವರೂ ಬೀಳುವರು. ನಾನು ದಂಡಿಸುವಾಗ ಅವರು ಏಳಲಾಗದಂತೆ ಮುಗ್ಗರಿಸಿ ಬೀಳುವರು. ಇದು ಸರ್ವೇಶ್ವರನಾದ ನನ್ನ ನುಡಿ.</verse>
				<verse number="13">“ನಾನು ಕೊಯ್ಲಿಗೆ ಕೈಹಾಕಲು ನೋಡಿದೆ. ಆದರೆ ದ್ರಾಕ್ಷೆಯ ಬಳ್ಳಿಗಳಲ್ಲಿ ಹಣ್ಣಿಲ್ಲ, ಅಂಜೂರದ ಮರದಲ್ಲಿ ಫಲವಿಲ್ಲ. ಎಲೆಯೂ ಬಾಡಿಹೋಗಿದೆ. ಪರರ ತುಳಿತಕ್ಕೆ ಈಡಾಗಿ ಇರುವುದು ಕಾಣುತ್ತದೆ. ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="14">ಜನರು: “ನಾವು ಸುಮ್ಮನೆ ಕುಳಿತಿರುವುದೇಕೆ? ಕೂಡಿಬನ್ನಿ, ಕೋಟೆಕೊತ್ತಲುಗಳುಳ್ಳ ಊರುಗಳನ್ನು ಸೇರಿಕೊಳ್ಳೋಣ. ಅಲ್ಲೆ ನಾಶವಾಗೋಣ. ನಮ್ಮ ದೇವರಾದ ಸರ್ವೇಶ್ವರನಿಗೆ ನಾವು ಪಾಪಮಾಡಿದ್ದರಿಂದ ಅವರು ನಮ್ಮನ್ನು ನಾಶಕ್ಕೆ ಗುರಿಮಾಡಿದ್ದಾರೆ. ವಿಷಬೆರೆತ ನೀರನ್ನು ಕುಡಿಯಲು ಕೊಟ್ಟಿದ್ದಾರೆ.</verse>
				<verse number="15">ಸುಖಶಾಂತಿಯನ್ನು ನಿರೀಕ್ಷಿಸಿದೆವು, ಯಾವ ಒಳಿತೂ ಸಿಗಲಿಲ್ಲ. ಸುಕ್ಷೇಮ ಕಾಲವನ್ನು ಎದುರುನೋಡಿದೆವು. ನಮಗೆ ಗಿಟ್ಟಿದ್ದು ಭಯಭ್ರಾಂತಿ ಮಾತ್ರ.</verse>
				<verse number="16">ವೈರಿ ಕುದುರೆಗಳ ಬುಸುಗುಟ್ಟುವಿಕೆ ಏಕೆ ಕೇಳಿಬರುತ್ತಿದೆ ದಾನಿನಿಂದ? ನಾಡನ್ನೆ ಕಂಪಿಸುತ್ತಿದೆ ಅವುಗಳ ಕೆನೆತದ ನಾದ. ಶತ್ರುಗಳು ಬಂದೇಬಿಟ್ಟರು! ನಾಡನ್ನೂ ಅದರಲ್ಲಿ ಇರುವುದೆಲ್ಲವನ್ನೂ, ನಗರವನ್ನೂ ಅದರ ನಿವಾಸಿಗಳನ್ನೂ ನುಂಗಿಯೇ ಬಿಟ್ಟರು!”</verse>
				<verse number="17">ಸರ್ವೇಶ್ವರ: “ಇಗೋ, ನಾನು ನಿಮ್ಮ ಮೇಲೆ ಹಾವುಗಳನ್ನು ಬಿಡುವೆನು. ಅವು ಮಾಯಮಂತ್ರಕ್ಕೆ ಬಾಗದ ನಾಗಸರ್ಪಗಳು! ಅವು ನಿಮ್ಮನ್ನು ಕಚ್ಚದೆ ಬಿಡವು.”</verse>
				<verse number="18">ಅಯ್ಯೋ, ನಾನು ಮುಕ್ತನಾಗಿಲ್ಲ ದುಃಖದಿಂದ ನನ್ನ ಹೃದಯ ಕುಂದಿಹೋಗಿದೆ ಶೋಕದಿಂದ.</verse>
				<verse number="19">ಇದೋ, ದೂರ ನಾಡಿನಿಂದ ಕೇಳಿಬರುತ್ತಿದೆ ನನ್ನ ಪ್ರಜೆಯೆಂಬಾಕೆಯ ಈ ಮೊರೆ: “ಸಿಯೋನಿನಲ್ಲಿ ಇನ್ನು ಸರ್ವೇಶ್ವರನಿಲ್ಲವೊ? ಅದರ ರಾಜನು ಅಲ್ಲಿ ವಾಸವಾಗಿಲ್ಲವೊ?” ಅದಕ್ಕೆ ಸರ್ವೇಶ್ವರ: “ಇವರು ತಮ್ಮ ವಿಗ್ರಹಾರಾಧನೆಯಿಂದ ಅನ್ಯದೇವತೆಗಳ ಶೂನ್ಯರೂಪಗಳಿಂದ ನನ್ನನ್ನು ಕೆಣಕಿದ್ದೇಕೆ?”</verse>
				<verse number="20">ಜನರು: “ಸುಗ್ಗಿ ಮುಗಿಯಿತು, ಹಣ್ಣಿನಕಾಲ ಕಳೆಯಿತು. ನಮಗಾದರೊ ರಕ್ಷಣೆ ದೊರಕದೆಹೋಯಿತು.”</verse>
				<verse number="21">ನನ್ನ ಪ್ರಜೆಯೆಂಬಾಕೆಯ ವೇದನೆಯಿಂದಲೆ ನಾನು ಅನುಭವಿಸುತ್ತಿರುವೆ ಮನೋಯಾತನೆ.</verse>
				<verse number="22">	ಗಿಲ್ಯಾದಿನಲ್ಲಿ ಔಷಧವಿಲ್ಲವೆ? ಅಲ್ಲಿ ವೈದ್ಯನು ಸಿಕ್ಕನೆ? ಮತ್ತೇಕೆ ಗುಣವಾಗಲಿಲ್ಲ ನನ್ನ ಜನತೆಗೆ?</verse>
			</chapter>
			<chapter number="9">
				<verse number="1">ನನ್ನ ತಲೆ ಒಂದು ಚಿಲುಮೆಯಾಗಿರಬಾರದಿತ್ತೆ? ನನ್ನ ಕಣ್ಣು ಒಂದು ಒರತೆಯಾಗಿರಬಾರದಿತ್ತೆ? ಆಗ ನನ್ನ ಜನರಲ್ಲಿ ಹತರಾದವರಿಗಾಗಿ ಹಗಲಿರುಳು ಅಳುತ್ತಿದ್ದೆ.</verse>
				<verse number="2">ಅಕಟಾ, ದಾರಿಗರು ತಂಗುವ ಗುಡಿಸಲೊಂದು ಕಾಡಿನಲ್ಲಿ ಸಿಗಬಾರದೆ! ಆಗ ಜನರನ್ನು ತ್ಯಜಿಸಿಬಿಟ್ಟು ನಾನಲ್ಲಿಗೆ ತೆರಳುತ್ತಿದ್ದೆ! ಅವರೆಲ್ಲರು ವ್ಯಭಿಚಾರಿಗಳು, ದ್ರೋಹಿಗಳ ಗುಂಪೇ ಅಲ್ಲವೆ?</verse>
				<verse number="3">ಸರ್ವೇಶ್ವರ: “ಸುಳ್ಳಾಡಲು ಬಿಲ್ಲಿನಂತೆ ನಾಲಿಗೆ ಬಗ್ಗಿಸುತ್ತಾರೆ ಸತ್ಯಕ್ಕೆ ಪ್ರತಿಕೂಲವಾಗಿಯೆ ನಾಡಿನಲ್ಲಿ ಪ್ರಬಲಿಸಿದ್ದಾರೆ ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನಾದರೊ ಅರಿಯದೆ ಇದ್ದಾರೆ.”</verse>
				<verse number="4">ನಿಮ್ಮ ನಿಮ್ಮ ಗೆಳೆಯರ ವಿಷಯದಲ್ಲಿ ಎಚ್ಚರಿಕೆಯಾಗಿರಿ ಯಾರೇ ಆಗಲಿ, ತನ್ನ ಸಹೋದರನನ್ನೂ ನಂಬದಿರಲಿ. ಪ್ರತಿಯೊಬ್ಬ ಸೋದರನೂ ವಂಚಿಸುವುದರಲ್ಲಿ ಯಕೋಬನಿಗೆ ಸಮಾನ. ಒಬ್ಬೊಬ್ಬ ಗೆಳೆಯನೂ ತಿರುಗಾಡುತ್ತಾನೆ ಚಾಡಿಹೇಳುತ್ತಾ.</verse>
				<verse number="5">ಎಲ್ಲರು ತಂತಮ್ಮ ಗೆಳೆಯರಿಗೆ ಮೋಸಮಾಡುತ್ತಾರೆ ಸತ್ಯವನ್ನು ನುಡಿವುದೇ ಇಲ್ಲ; ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ ಆಯಾಸವಾಗುವ ಮಟ್ಟಿಗೂ ಕೆಡಕನ್ನು ಮಾಡುತ್ತಿದ್ದಾರೆ.</verse>
				<verse number="6">‘ನೀನು (ಯೆರೆಮೀಯ) ವಾಸವಾಗಿರುವುದು ಮೋಸಗಾರರ ಮಧ್ಯೆ ಮೋಸಗಾರರಾಗಿರುವುದರಿಂದಲೆ ಅವರು ನನ್ನನ್ನು ಅರಿಯಲೊಲ್ಲರು’ ಎನ್ನುತ್ತಾರೆ ಸರ್ವೇಶ್ವರ.</verse>
				<verse number="7">ಹೀಗಿರಲು ಸರ್ವಶಕ್ತರಾದ ಸರ್ವೇಶ್ವರನ ಮಾತನ್ನು ಕೇಳಿ: “ಅಕಟಾ, ನನ್ನ ಜನರ ದ್ರೋಹಕ್ಕೆ ಏನು ಮಾಡಲಿ? ಅವರನ್ನು ಶೋಧಿಸುವೆನು ಪುಟಕ್ಕೆ ಹಾಕಿ!</verse>
				<verse number="8">ಅವರ ನಾಲಿಗೆ ಕೊಲ್ಲುವ ಬಾಣ, ಅದು ಆಡುವುದು ಸುಳ್ಳನ್ನೇ ಬಾಯಲ್ಲಿ ಶುಭವೆಂದು ಹೇಳಿದರೂ ಹೃದಯದಲ್ಲಿ ಒಡ್ಡಿದ್ದಾರೆ ಹೊಂಚನ್ನೇ.</verse>
				<verse number="9">ಇಂಥವುಗಳಿಗಾಗಿ ನಾನು ಅವರನ್ನು ಹಿಂಸಿಸಬಾರದೆ? ಇಂಥ ಜನಾಂಗದ ಮೇಲೆ ಸೇಡನ್ನು ತೀರಿಸಿಕೊಳ್ಳದಿರುವೆನೆ?”</verse>
				<verse number="10">ನಾನು: ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ!</verse>
				<verse number="11">ಸರ್ವೇಶ್ವರ: “ಹಾಳು ದಿಬ್ಬಗಳನ್ನಾಗಿಸುವೆನು ಜೆರುಸಲೇಮನ್ನು ನರಿಗಳ ಹಕ್ಕೆಯನ್ನಾಗಿಸುವೆನು ಜುದೇಯ ಪಟ್ಟಣಗಳನ್ನು ಜನರಿಲ್ಲದ ಬೀಳುಭೂಮಿಯನ್ನಾಗಿಸುವೆನು ಅವುಗಳನ್ನು.”</verse>
				<verse number="12">ನಾನು: “ಈ ನಾಡು ಯಾರೂ ಹಾದುಹೋಗದಷ್ಟು ಹಾಳಾಗಿ ಕಾಡಿನಂತೆ ಸುಟ್ಟುಹೋದದ್ದು ಏಕೆ? ಈ ವಿಷಯವನ್ನು ಗ್ರಹಿಸತಕ್ಕ ಜ್ಞಾನಿ ಯಾರು? ಅದನ್ನು ಸರ್ವೇಶ್ವರನ ಬಾಯಿಂದಲೆ ಕೇಳಿ ತಿಳಿಸಬಲ್ಲವನಾರು?”</verse>
				<verse number="13">ಇಸ್ರಯೇಲಿನ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ನಾನು ಇವರ ಕಣ್ಣೆದುರಿಗೇ ಇಟ್ಟಿರುವ ಧರ್ಮೋಪದೇಶವನ್ನು ಇವರು ಲಕ್ಷ್ಯಕ್ಕೆ ತಂದುಕೊಳ್ಳಲಿಲ್ಲ.</verse>
				<verse number="14">ನನ್ನ ಮಾತನ್ನು ಕೇಳದೆ, ಧರ್ಮಮಾರ್ಗದಲ್ಲಿ ನಡೆಯದೆ, ಹಟಮಾರಿಗಳಂತೆ ಸ್ವೇಚ್ಛಾನುಸಾರ ನಡೆದುಕೊಂಡರು. ತಮ್ಮ ಪೂರ್ವಜರು ಕಲಿಸಿಕೊಟ್ಟ ಹಾಗೆ ಬಾಳ್‍ದೇವತೆಗಳನ್ನು ಹಿಂಬಾಲಿಸಿದರು.</verse>
				<verse number="15">ಆದುದರಿಂದ ಈ ಜನರು ಕಹಿಯಾದ ಇಟ್ಟಿಕಾಯನ್ನು ತಿನ್ನುವಂತೆ ಮಾಡುವೆನು; ವಿಷ ಬೆರೆತ ನೀರನ್ನು ಕುಡಿಯುವಂತೆ ಮಾಡುವೆನು.</verse>
				<verse number="16">ಇವರಿಗಾಗಲಿ ಇವರ ಪೂರ್ವಜರಿಗಾಗಲಿ ಪರಿಚಯವಿಲ್ಲದ ಜನಾಂಗಗಳ ನಡುವೆ ಇವರನ್ನು ಚದರಿಸಿಬಿಡುವೆನು. ಇವರು ಅಳಿದು ಹಾಳಾಗುವ ತನಕ ಇವರ ಹಿಂದೆ ಖಡ್ಗವನ್ನು ಕಳಿಸುವೆನು.”</verse>
				<verse number="17">ಸರ್ವಶಕ್ತ ಸರ್ವೇಶ್ವರ ಸ್ವಾಮಿಯ ಮಾತು: “ನಡೆಯುತ್ತಿರುವ ಕಾರ್ಯಗಳನ್ನು ಆಲೋಚಿಸಿ ನೋಡಿ ರೋದನಾ ಗಾಯಕಿಯರನ್ನು ಕರೆಯಿಸಿರಿ ಅವರಲ್ಲಿ ಜಾಣೆಯರನ್ನು ಕರೆಯ ಕಳಿಸಿರಿ ಅವರೂ ಬಂದು ಸೇರಲಿ.”</verse>
				<verse number="18">ಜನರು: “ಅವರು ತ್ವರೆಯಾಗಿ ಬಂದು ನಮಗೋಸ್ಕರ ಗೋಳೆತ್ತಲಿ ನಮ್ಮ ಕಣ್ಣುಗಳಿಂದ ನೀರು ಧಾರಾಕಾರವಾಗಿ ಸುರಿವಂತೆ ಮಾಡಲಿ ಕಣ್ಣಿನ ರೆಪ್ಪೆಗಳಿಂದ ನೀರು ಉಕ್ಕಿ ಹರಿವಂತೆ ಮಾಡಲಿ.”</verse>
				<verse number="19">ಸಿಯೋನಿನಿಂದ ಕೇಳಿಬಂದ ಪ್ರಲಾಪನೆ: “ಅಯ್ಯೋ ಹಾಳಾದೆವು, ನಮ್ಮ ಮಾನಮರ್ಯಾದೆ ಕಳೆದುಹೋಯಿತು! ನಾವು ನಮ್ಮ ನಾಡನ್ನೇ ಬಿಟ್ಟು ತೊಲಗಬೇಕಾಗಿ ಬಂದಿತು. (ಶತ್ರುಗಳಿಂದ) ನಮ್ಮ ಮನೆಮಠಗಳು ನೆಲಸಮವಾದವು.”</verse>
				<verse number="20">ನಾನು: “ಮಹಿಳೆಯರೇ, ಸರ್ವೇಶ್ವರ ಸ್ವಾಮಿಯ ನುಡಿಯನ್ನು ಕೇಳಿರಿ ಅವರ ಬಾಯಿಂದ ಹೊರಟ ಮಾತಿಗೆ ಕಿವಿ ತೆಗೆಯಿರಿ ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಟವನ್ನು ಕಲಿಸಿರಿ ಪ್ರತಿಯೊಬ್ಬಳೂ ತನ್ನ ನೆರೆಯವಳಿಗೆ ಶೋಕಗೀತೆಯನ್ನು ಹೇಳಿಕೊಡಲಿ.</verse>
				<verse number="21">ಏಕೆಂದರೆ ಮೃತ್ಯು ನಮ್ಮ ಕಿಟಕಿಗಳನ್ನು ಏರಿಬಂದಿದೆ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿಬಿಟ್ಟಿದೆ ಬೀದಿಗಳಲ್ಲಿ ಮಕ್ಕಳೂ ಕಡಿದುಬಿದ್ದರು ಚೌಕಗಳಲ್ಲಿ ಯುವಕರೂ ಇಲ್ಲವಾದರು.</verse>
				<verse number="22">ಜನರ ಹೆಣಗಳು ನೆಲದ ಮೇಲೆ ಬಿದ್ದು ಗೊಬ್ಬರವಾಗುವುವು ಅವು ಹೊಲ ಕೊಯ್ಯುವವನ ಹಿಂದೆ ಯಾರೂ ಕೂಡಿಸದೆ ಬಿದ್ದಿರುವ ಅರಿಗಳಂತಿರುವುವು - ಈ ಮಾತುಗಳನ್ನು ಸಾರುವಂತೆ ಸರ್ವೇಶ್ವರನಿಂದ ನನಗೆ ಅಪ್ಪಣೆಯಾಯಿತು.”</verse>
				<verse number="23">ಸರ್ವೇಶ್ವರ ಸ್ವಾಮಿ: “ಜ್ಞಾನಿ ತನ್ನ ಜ್ಞಾನಕ್ಕಾಗಿ, ಪರಾಕ್ರಮಿ ತನ್ನ ಪರಾಕ್ರಮಕ್ಕಾಗಿ ಐಶ್ವರ್ಯವಂತ ತನ್ನ ಐಶ್ವರ್ಯಕ್ಕಾಗಿ ಹೆಚ್ಚಳಪಡದಿರಲಿ.</verse>
				<verse number="24">ಹೆಚ್ಚಳಪಡುವವನು ನನ್ನನ್ನು ತಾನು ತಿಳಿದುಕೊಂಡದ್ದಕ್ಕಾಗಿ ಹೆಚ್ಚಳಪಡಲಿ; ಜಗದಲ್ಲಿ ಅಚಲ ಪ್ರೀತಿಯನ್ನೂ ನ್ಯಾಯನೀತಿಯನ್ನೂ ತೋರ್ಪಡಿಸುವ ಸರ್ವೇಶ್ವರ ನಾನೇ; ನನಗೆ ಪ್ರಿಯವಾದುವು ಪ್ರೀತಿ, ನೀತಿ, ನ್ಯಾಯಗಳೇ. ಇದನ್ನು ಗ್ರಹಿಸಿಕೊಂಡದ್ದಕ್ಕಾಗಿ ಹೆಚ್ಚಳಪಡಲಿ. ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="25">“ಈಜಿಪ್ಟರು, ಯೆಹೂದ್ಯರು, ಎದೋಮ್ಯರು, ಅಮ್ಮೋನ್ಯರು, ಮೊವಾಬ್ಯರು, ಮುಂದಲೆ ಕೂದಲನ್ನು ಕತ್ತರಿಸಿಕೊಳ್ಳುವ ಅರಣ್ಯವಾಸಿಗಳು, ಅಂತು ದೇಹದಲ್ಲಿ ಮಾತ್ರ ಸುನ್ನತಿಯುಳ್ಳವರು, ಇವರೆಲ್ಲರನ್ನು ದಂಡಿಸುವ ದಿನಗಳು ಬರುತ್ತವೆ.</verse>
				<verse number="26">ಏಕೆಂದರೆ ಈ ಎಲ್ಲ ಜನಾಂಗದವರು, ಇಸ್ರಯೇಲ್ ವಂಶದವರು ಕೂಡ, ಹೃದಯದಲ್ಲಿ ಸುನ್ನತಿಯಿಲ್ಲದವರು. ಇದು ಸರ್ವೇಶ್ವರನಾದ ನಾನು ಆಡುವ ಮಾತು.”</verse>
			</chapter>
			<chapter number="10">
				<verse number="1">ಇಸ್ರಯೇಲ್ ವಂಶದವರೇ, ಸರ್ವೇಶ್ವರ ಸ್ವಾಮಿ ನಿಮಗೆ ನುಡಿಯುವ ಮಾತನ್ನು ಕೇಳಿರಿ; ಅವರು ಹೇಳುವುದು ಇದು:</verse>
				<verse number="2">“ಅನ್ಯಜನಾಂಗಗಳ ಆಚರಣೆಯನ್ನು ಅನುಸರಿಸಬೇಡಿ ಅವರು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿ.</verse>
				<verse number="3">ಆ ಜನಾಂಗಗಳ ಧಾರ್ಮಿಕ ಪದ್ಧತಿಗಳು ಶೂನ್ಯ. ಅರಣ್ಯದ ಮರಗಳನ್ನು ಅವರು ಕತ್ತರಿಸುತ್ತಾರೆ ಬಡಗಿಯ ಕೈಯಿಂದ, ಅವನ ಉಳಿಯಿಂದ, ಅದನ್ನು ರೂಪಿಸುತ್ತಾರೆ.</verse>
				<verse number="4">ಅದನ್ನು ಅಲಂಕರಿಸುತ್ತಾರೆ ಬೆಳ್ಳಿಬಂಗಾರಗಳಿಂದ ಅದು ಅಲುಗದ ಹಾಗೆ ಭದ್ರಪಡಿಸುತ್ತಾರೆ ಮೊಳೆಸುತ್ತಿಗೆಯಿಂದ</verse>
				<verse number="5">ಸೌತೆ ತೋಟದ ಬೆದರುಗಂಬದಂತಿರುವ ಈ ಬೊಂಬೆಗಳು ಮಾತನಾಡಲಾರವು. ಅವನ್ನು ಹೊತ್ತುಕೊಂಡು ಹೋಗಬೇಕು, ಅವು ನಡೆಯಲಾರವು. ಅವುಗಳಿಗೆ ನೀವು ಅಂಜಬೇಕಾಗಿಲ್ಲ, ಅವು ಕೇಡುಮಾಡಲಾರವು; ಮೇಲುಮಾಡಲಿಕ್ಕೂ ಸಾಮರ್ಥ್ಯವಿಲ್ಲದಿರುವುವು.”</verse>
				<verse number="6">ಹೇ ಸರ್ವೇಶ್ವರಾ, ನಿಮಗೆ ಸಮಾನನು ಇಲ್ಲ, ನೀವು ಮಹೋತ್ತಮರು ಸಾಮರ್ಥ್ಯದಿಂದ ಕೂಡಿರುವ ನಿಮ್ಮ ನಾಮವೂ ಮಹತ್ತರವಾದುದು.</verse>
				<verse number="7">ಜನಾಂಗಗಳ ಒಡೆಯಾ, ಅರಸರೇ, ನಿಮಗೆ ಅಂಜದೆ ಇರುವವರಾರು? ಹೌದು, ನೀವು ಭಯಭಕ್ತಿಗೆ ಪಾತ್ರರು ರಾಷ್ಟ್ರಗಳ ಜ್ಞಾನಿಗಳಲ್ಲೂ ರಾಜಪರಂಪರೆಯಲ್ಲೂ ಯಾವನೂ ಇಲ್ಲ ನಿಮಗೆ ಸಮಾನನು.</verse>
				<verse number="8">ಕೇವಲ ಪಶುಪ್ರಾಯರು, ಮಂದಮತಿಗಳು, ಅವರೆಲ್ಲರು ಬೊಂಬೆ ಪೂಜೆಯಿಂದ ಬರುವ ಜ್ಞಾನ ಮರದಂತೆ ಮೊದ್ದು.</verse>
				<verse number="9">ಆ ಬೊಂಬೆಗಳ ಭೂಷಣಕ್ಕಾಗಿ ಸಾಗಿಬರುತ್ತವೆ ತಾರ್ಷೀಷಿನಿಂದ ಬೆಳ್ಳೀತಗಡುಗಳು, ಊಫಜಿನಿಂದ ಚಿನ್ನ. ಅವು ಕೆತ್ತನೆಗಾರನ, ಎರಕದವನ ಕೈಕೆಲಸಗಳು ಅವುಗಳ ಉಡುಪು ನೀಲಧೂಮ್ರ ವರ್ಣದ ವಸ್ತ್ರಗಳು. ಇವೆಲ್ಲವು ಕೇವಲ ಕಲಾಕುಶಲರ ಕೌಶಲ್ಯಗಳು.</verse>
				<verse number="10">ಹೇ ಸರ್ವೇಶ್ವರಾ, ನೀವಾದರೋ ಸತ್ಯದೇವರು, ಜೀವಸ್ವರೂಪ ದೇವರು, ಶಾಶ್ವತ ರಾಜರು ನಿಮ್ಮ ಕೋಪಕ್ಕೆ ನಡುಗುತ್ತದೆ ಭೂಲೋಕ ನಿಮ್ಮ ರೋಷವನ್ನು ತಾಳಲಾರದು ಜನಾಂಗ.</verse>
				<verse number="11">“ಭೂಮ್ಯಾಕಾಶಗಳನ್ನು ಸೃಷ್ಟಿಸದ ದೇವರುಗಳು ಭೂಮಿಯ ಮೇಲಿಂದಲೂ ಆಕಾಶದ ಕೆಳಗಿನಿಂದಲೂ ಅಳಿದುಹೋಗುವುವು” ಎಂದು ನೀವು ಆ ಜನಾಂಗಗಳಿಗೆ ತಿಳಿಸಿರಿ.</verse>
				<verse number="12">ಸರ್ವೇಶ್ವರ ಭೂಮಿಯನ್ನು ನಿರ್ಮಿಸಿದ್ದಾರೆ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ್ದಾರೆ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ್ದಾರೆ ವಿವೇಕದಿಂದ.</verse>
				<verse number="13">ಆಕಾಶದಲ್ಲಿ ನೀರು ಭೋರ್ಗರೆಯುವಂತೆ ಭುವಿಯ ಕಟ್ಟಕಡೆಯಿಂದ ಮೋಡಗಳು ಏರುವಂತೆ ಮಳೆಗಾಗಿ ಮಿಂಚು ಹೊಳೆಯುವಂತೆ ತಮ್ಮ ಭಂಡಾರದಿಂದ ಗಾಳಿ ಬೀಸುವಂತೆ - ಮಾಡುತ್ತದೆ ಸರ್ವೇಶ್ವರನಾ ಗರ್ಜನೆ.</verse>
				<verse number="14">ಇದರ ಮುಂದೆ ತಿಳುವಳಿಕೆಯಿಲ್ಲದ ಪಶುಪ್ರಾಯರು ಜನರೆಲ್ಲರು. ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಅವನು ಎರಕ ಹೊಯ್ದ ವಿಗ್ರಹಗಳು ಟೊಳ್ಳು, ಶ್ವಾಸವಿಲ್ಲದವುಗಳು.</verse>
				<verse number="15">ಅವು ವ್ಯರ್ಥವಾದುವುಗಳು, ಹಾಸ್ಯಾಸ್ಪದವಾದುವುಗಳು ದಂಡನೆಯ ಕಾಲದಲ್ಲಿ ಅಳಿದುಹೋಗುವಂಥವುಗಳು.</verse>
				<verse number="16">ಹಾಗಲ್ಲ ಯಕೋಬ್ಯರಿಗೆ ಸ್ವಂತವಾದ ದೇವರು ಅವರು ಸಮಸ್ತವನ್ನು ಸೃಷ್ಟಿಸಿದವರು. ಇಸ್ರಯೇಲ್ ಗೋತ್ರ ಅವರಿಗೆ ಸ್ವಾಸ್ತ್ಯ. ‘ಸೇನಾಧೀಶ್ವರ ಸರ್ವೇಶ್ವರ’ ಅವರ ನಾಮಧೇಯ.</verse>
				<verse number="17">ಮುತ್ತಿಗೆಗೆ ತುತ್ತಾದ ಜನತೆಯೇ, ಗಂಟು ಕಟ್ಟಿಕೊಂಡು ನಾಡುಬಿಟ್ಟು ನಡೆ.</verse>
				<verse number="18">ಏಕೆಂದರೆ ಸರ್ವೇಶ್ವರ ನುಡಿವ ಮಾತಿದು: “ಇಗೋ, ಈ ಸಾರಿ ಈ ನಾಡಿನ ನಿವಾಸಿಗಳನ್ನು ಕವಣೆಯ ಕಲ್ಲಂತೆ ಎಸೆದುಬಿಡುವೆನು; ಬುದ್ಧಿಬರಲೆಂದು ಅವರನ್ನು ಬಾಧಿಸುವೆನು.”</verse>
				<verse number="19">ಜೆರುಸಲೇಮಿನ ಗೋಳು: “ಅಯ್ಯೋ ನಾನು ಗಾಯಗೊಂಡೆ ನನಗೆ ಬಿದ್ದ ಪೆಟ್ಟು ಗಡಸು. ತಗಲಿದೆ ವ್ಯಾಧಿ, ಸಹಿಸಲೇಬೇಕಾದ ಕಾಯಿಲೆ.</verse>
				<verse number="20">ನನ್ನ ಗುಡಾರ ಹಾಳಾಗಿದೆ, ಹಗ್ಗಗಳು ಕಿತ್ತುಹೋಗಿವೆ. ಮಕ್ಕಳು ನನ್ನನ್ನು ಬಿಟ್ಟು ಕಾಣದೆಹೋಗಿದ್ದಾರೆ ಗುಡಾರ ಹಾಕಲು, ಪರದೆ ಬಿಗಿಯಲು, ಯಾರೂ ಇಲ್ಲವಾಗಿದ್ದಾರೆ.”</verse>
				<verse number="21">ನಮ್ಮ ಪಾಲಕರು ಪಶುಪ್ರಾಯರು ಸರ್ವೇಶ್ವರನ ಕಡೆಗೆ ಕಣ್ಣೆತ್ತದೆಹೋದರು. ಆ ಕಾರಣ ಅವರ ಕಾರ್ಯ ಸಾರ್ಥಕವಾಗಲಿಲ್ಲ ಚದರಿಹೋದವು ಅವರ ಹಿಂಡುಗಳೆಲ್ಲ.</verse>
				<verse number="22">ಇದೋ ಸುದ್ದಿ, ಕೇಳಿಬರುತ್ತಿದೆ ಸುದ್ದಿ! ದೊಡ್ಡ ಕೋಲಾಹಲವೆದ್ದಿದೆ ಉತ್ತರ ನಾಡಿನಲ್ಲಿ: ‘ಅದನ್ನು ನರಿಗಳ ಬೀಡಾಗಿಸಿರಿ ಜುದೇಯದ ನಗರಗಳನ್ನು ನಾಶಮಾಡಿ.’</verse>
				<verse number="23">ಸರ್ವೇಶ್ವರಾ, ಮಾನವನ ಗುರಿಸಾಧನೆ ಅವನ ಸ್ವಾಧೀನದಲ್ಲಿಲ್ಲ. ಸರಿದಿಸೆಯಲ್ಲಿ ಅವನು ಹೆಜ್ಜೆಯಿಡಲಾರನೆಂದು ನಿಮಗೆ ಗೊತ್ತಿದೆಯಲ್ಲಾ.</verse>
				<verse number="24">ಹೇ ಸರ್ವೇಶ್ವರಾ, ನಮ್ಮನ್ನು ದಂಡಿಸಿ ಸುಧಾರಿಸಿ ಆದರೆ ಮಿತಿಮೀರಬೇಡ, ಕೋಪದಿಂದ ದಂಡಿಸಬೇಡಿ. ಇಲ್ಲವಾದರೆ ನಾವು ನಶಿಸಿ ನಾಶವಾದೇವು!</verse>
				<verse number="25">ಸರ್ವೇಶ್ವರಾ, ನಿಮ್ಮನ್ನು ಅರಿತುಕೊಳ್ಳದವರ ಮೇಲೆ ನಿಮ್ಮ ನಾಮವನ್ನು ಉಚ್ಚರಿಸದವರ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದುಬಿಡಿ. ಅವರು ಯಕೋಬ್ಯರನ್ನು ಕಬಳಿಸಿದ್ದಾರೆ ಹೌದು, ಪೂರ್ತಿಯಾಗಿ ಕಬಳಿಸಿಬಿಟ್ಟಿದ್ದಾರೆ ಅವರ ನಿವಾಸಗಳನ್ನು ನಾಶಮಾಡಿದ್ದಾರೆ.</verse>
			</chapter>
			<chapter number="11">
				<verse number="1">ಸರ್ವೇಶ್ವರ ಸ್ವಾಮಿ ಯೆರೆಮೀಯನಾದ ನನಗೆ ದಯಪಾಲಿಸಿದ ವಾಕ್ಯ ಇದು:</verse>
				<verse number="2">“ಒಡಂಬಡಿಕೆಯ ಈ ವಚನಗಳನ್ನು ಕೇಳಿ ಯೆಹೂದ್ಯರಿಗೂ ಜೆರುಸಲೇಮಿನ ನಿವಾಸಿಗಳಿಗೂ ಸಾರು.</verse>
				<verse number="3">ನೀನು ಅವರಿಗೆ ಹೇಳಬೇಕಾದುದು - ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಈಜಿಪ್ಟ್ ದೇಶದಿಂದ ನಿಮ್ಮ ಪೂರ್ವಜರನ್ನು ನಾನು ಬರಮಾಡಿದಾಗ ಅವರಿಗೆ ‘ನೀವು ನನ್ನ ಮಾತನ್ನು ಕೇಳಿ ನಾನು ನಿಮಗೆ ಆಜ್ಞಾಪಿಸಿರುವ ವಿಧಿಗಳನ್ನೆಲ್ಲಾ ಕೈಗೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು.</verse>
				<verse number="4"></verse>
				<verse number="5">ಹಾಲೂ ಜೇನೂ ಹರಿಯುವ ನಾಡನ್ನು, ಅಂದರೆ ಇಂದು ನೀವಿರುವ ನಾಡನ್ನು, ಕೊಡುವುದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಯೇಲಿನ ದೇವರಾದ ಸರ್ವೇಶ್ವರ ಹೇಳುವ ಮಾತು.” ಆಗ ನಾನು, “ತಮ್ಮ ಅಪ್ಪಣೆಯಂತಾಗಲಿ, ಸರ್ವೇಶ್ವರಾ,” ಎಂದು ಉತ್ತರಕೊಟ್ಟೆ.</verse>
				<verse number="6">ಸರ್ವೇಶ್ವರ ನನಗೆ: “ಜುದೇಯದ ನಗರಗಳಲ್ಲೂ ಜೆರುಸಲೇಮಿನ ಹಾದಿಬೀದಿಗಳಲ್ಲೂ ಈ ಸಮಾಚಾರವನ್ನು ಹರಡು - ಈ ಒಡಂಬಡಿಕೆಯ ವಚನಗಳನ್ನು ಕೇಳಿ ಅದರಂತೆ ನಡೆದುಕೊಳ್ಳಿರಿ.</verse>
				<verse number="7">ನಿಮ್ಮ ಪೂರ್ವಜರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ ನನ್ನ ಮಾತನ್ನು ಕೇಳಿರೆಂದು ತಡಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದಿದ್ದೇನೆ.</verse>
				<verse number="8">ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನು ತನ್ನ ದುಷ್ಟ ಹೃದಯದ ನಿಮಿತ್ತ ಹಟಮಾರಿಯಂತೆ ನಡೆದುಕೊಂಡನು. ಆದಕಾರಣ, ಕೈಗೊಳ್ಳಬೇಕೆಂದು ನಾನು ಆಜ್ಞಾಪಿಸಿದ್ದರೂ ಅವರು ಕೈಗೊಳ್ಳದೆಹೋದ ಆ ಒಡಂಬಡಿಕೆಯಲ್ಲೆ ಸೂಚಿಸಲಾಗಿರುವ ಶಾಪಗಳನ್ನೆಲ್ಲ ಅವರ ಮೇಲೆ ಬರಮಾಡಿದೆ.”</verse>
				<verse number="9">ಮತ್ತೆ ಸರ್ವೇಶ್ವರ ನನಗೆ: “ಜುದೇಯದ ಹಾಗು ಜೆರುಸಲೇಮಿನ ನಿವಾಸಿಗಳಲ್ಲಿ ಒಳಸಂಚು ಕಂಡುಬಂದಿದೆ.</verse>
				<verse number="10">ನನ್ನ ಮಾತನ್ನು ಕೇಳದೆಹೋದ ತಮ್ಮ ಮೂಲಪಿತೃಗಳ ದುಷ್ಕೃತ್ಯಗಳ ಕಡೆ ಈ ಜನರು ತಿರುಗಿಕೊಂಡಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸುತ್ತಿದ್ದಾರೆ. ಅವುಗಳನ್ನು ಪೂಜಿಸುತ್ತಿದ್ದಾರೆ. ನಾನು ಅವರ ಪೂರ್ವಜರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಇಸ್ರಯೇಲ್ ವಂಶದವರೂ ಜುದೇಯ ವಂಶದವರೂ ಮೀರಿದ್ದಾರೆ.</verse>
				<verse number="11">ಆದಕಾರಣ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ: ಇಗೋ, ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ಬರಮಾಡುವೆನು. ಇವರು ನನಗೆ ಮೊರೆಯಿಟ್ಟರೂ ನಾನೂ ಕಿವಿಗೊಡೆನು.</verse>
				<verse number="12">ಆಗ ಜುದೇಯದ ನಗರದವರೂ ಜೆರುಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಧೂಪಾರತಿಯೆತ್ತಿದರೋ ಅವುಗಳನ್ನು ಮರೆಹೊಕ್ಕು ಕೂಗಿಕೊಳ್ಳುವರು. ಆದರೆ ಅಂಥ ಕೇಡಿನ ಕಾಲದಲ್ಲಿ ಆ ದೇವತೆಗಳಿಂದ ಅವರಿಗೆ ಯಾವ ರಕ್ಷಣೆಯೂ ದೊರಕದು.</verse>
				<verse number="13">ಎಲೈ ಯೆಹೂದ ಜನರೇ, ನಿಮಗೆ ಎಷ್ಟು ನಗರಗಳಿವೆಯೋ ಅಷ್ಟೂ ದೇವರುಗಳಿದ್ದಾರೆ. ಜೆರುಸಲೇಮಿನಲ್ಲಿ ಹಾದಿಬೀದಿಗಳು ಎಷ್ಟಿವೆಯೋ ಅಷ್ಟೂ ಬಲಿಪೀಠಗಳಿವೆ, ಆ ತುಚ್ಛ ದೇವತೆ ಬಾಳನಿಗೆ ಧೂಪಾರತಿಯೆತ್ತಲು.</verse>
				<verse number="14">ಆದುದರಿಂದ ಯೆರೆಮೀಯನೇ, ಈ ಜನರ ಪರವಾಗಿ ಬೇಡಿಕೊಳ್ಳಬೇಡ. ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಲೂಬೇಡ. ಅವರಿಗೆ ಕೇಡು ಬಂದಾಗ ನನ್ನನ್ನು ಗೋಗರೆದರೂ ನಾನು ಕೇಳುವುದಿಲ್ಲ.</verse>
				<verse number="15">“ನನಗೆ ಆಪ್ತವಾದ ಜನತೆಯು, ನನಗೆ ಅಸಹ್ಯಕಾರ್ಯಗಳನ್ನು ಮಾಡಿದ್ದೇಕೆ? ನನ್ನ ಆಲಯದಲ್ಲಿ ಅದಕ್ಕಿರುವ ಹಕ್ಕಾದರೂ ಏನು? ವ್ರತಗಳ ಮೂಲಕ, ಪಶುಬಲಿ ಮಾಂಸದ ಮೂಲಕ ಅದು ಬರಲಿರುವ ದಂಡನೆಯನ್ನು ತಡೆಗಟ್ಟಬಲ್ಲದೆ?</verse>
				<verse number="16">ಸರ್ವೇಶ್ವರನಾದ ನಾನು ಅದಕ್ಕೆ ‘ಸುಂದರ ಫಲದಿಂದ ಕೂಡಿದ ಚೆಲುವಾದ ಹಚ್ಚನೆಯ ಓಲಿವ್ ಮರ’ ಎಂದು ಹೆಸರಿಟ್ಟೆ. ಆದರೆ ಅದೇ ಮರಕ್ಕೆ ಬೆಂಕಿಯಿಟ್ಟು ಧಗಧಗನೆ ಉರಿಯುವಂತೆ ಮಾಡುವೆನು. ಅದರ ರೆಂಬೆಗಳು ಸುಟ್ಟುಹೋಗುವುವು.</verse>
				<verse number="17">“ಸರ್ವಶಕ್ತ ಸರ್ವೇಶ್ವರನಾದ ನಾನೇ ಈ ಇಸ್ರಯೇಲನ್ನೂ ಜುದೇಯವನ್ನೂ ನೆಟ್ಟಿ ಬೆಳೆಸಿದೆ. ಆದರೆ ಈಗ ‘ನಿನಗೆ ಕೇಡು,’ ಎಂದು ಶಪಿಸುತ್ತಿದ್ದೇನೆ. ಏಕೆಂದರೆ ಬಾಳನಿಗೆ ಧೂಪಾರತಿಯೆತ್ತಿ, ನನ್ನನ್ನು ಕೆಣಕಿ, ತಮಗೇ ಕೆಡುಕನ್ನು ಮಾಡಿಕೊಂಡಿದ್ದಾರೆ.</verse>
				<verse number="18">ಸರ್ವೇಶ್ವರ ಸ್ವಾಮಿ ತಿಳಿಸಿದ್ದರಿಂದಲೇ ಶತ್ರುಗಳು ನನಗೆ ವಿರುದ್ಧ ಹೂಡಿದ್ದ ಕುತಂತ್ರವು ನನಗೆ ಗೊತ್ತಾಯಿತು. ಅವರ ಕೃತ್ಯಗಳನ್ನು ನನಗೆ ತೋರಿಸಲಾಯಿತು.</verse>
				<verse number="19">ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. “ಮರವನ್ನು ಫಲಸಹಿತ ನಾಶಪಡಿಸೋಣ, ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ. ಅವನ ಹೆಸರೇ ಇಲ್ಲದಂತಾಗಲಿ,” ಎಂದು ಅವರು ಕುಯುಕ್ತಿ ಕಲ್ಪಿಸಿದ್ದರು. ಆದರೆ ನನಗೆ ಅದು ತಿಳಿದಿರಲಿಲ್ಲ.</verse>
				<verse number="20">ಆಗ ನಾನು, “ಸೇನಾಧೀಶ್ವರರಾದ ಸರ್ವೇಶ್ವರಾ, ನೀವು ಹೃನ್ಮನಗಳನ್ನು ಪರೀಕ್ಷಿಸಿ ನ್ಯಾಯವಾದ ತೀರ್ಪನ್ನು ನೀಡುವವರು. ನೀವು ಅವರಿಗೆ ಮಾಡುವ ಪ್ರತೀಕಾರವನ್ನು ನಾನು ಕಾಣುವೆನು. ನನ್ನ ವ್ಯಾಜ್ಯವನ್ನು ನಿಮ್ಮ ಕೈಗೊಪ್ಪಿಸಿದ್ದೇನೆ,” ಎಂದೆನು.</verse>
				<verse number="21">ಹೀಗಿರಲು, “ಸರ್ವೇಶ್ವರನ ಹೆಸರೆತ್ತಿ ಪ್ರವಾದನೆ ಮಾಡಬೇಡ, ಮಾಡಿದರೆ ನಮ್ಮ ಕೈಯಿಂದಲೆ ನೀನು ಸಾಯುವೆ,” ಎಂದು ಅನಾತೋತಿನವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಿದ್ದರು.</verse>
				<verse number="22">ಅವರ ವಿಷಯವಾಗಿ ಸರ್ವೇಶ್ವರ, “ಇಗೋ ಅವರನ್ನು ನಾನು ದಂಡಿಸಿಯೇ ತೀರುವೆನು. ಅವರ ಯುವಕರು ಕತ್ತಿಗೆ ತುತ್ತಾಗುವರು. ಅವರ ಗಂಡುಹೆಣ್ಣು ಮಕ್ಕಳು ಕ್ಷಾಮದಿಂದ ಸಾಯುವರು.</verse>
				<verse number="23">ದಂಡನೆಯ ಕಾಲವನ್ನು ಗೊತ್ತುಮಾಡಿರುವೆನು. ಅದು ಬಂದಾಗ ಅವರಲ್ಲಿ ಯಾರೂ ಉಳಿಯರು. ಇದು ನನ್ನ ತೀರ್ಮಾನ,” ಎಂದರು.</verse>
			</chapter>
			<chapter number="12">
				<verse number="1">ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಿಮ್ಮೊಡನೆ ವ್ಯಾಜ್ಯ ನನಗೆ ಅಸಾಧ್ಯ. ಆದರೂ ನಿಮ್ಮೊಡನೆ ಚರ್ಚಿಸಬೇಕೆಂದಿರುವೆ ಈ ನ್ಯಾಯ: ದುರುಳರ ಬಾಳು ಬೆಳಗುತ್ತಿರುವುದು ಏಕೆ? ದ್ರೋಹಿಗಳೆಲ್ಲರು ನೆಮ್ಮದಿಯಾಗಿರುವುದು ಏಕೆ?</verse>
				<verse number="2">ಅವರನ್ನು ನಾಟಿಮಾಡಿದವರು ನೀವು ಬೇರೂರಿ ಬೆಳೆದು ಹಣ್ಣುಬಿಡುತ್ತಿದ್ದಾರೆ ಅವರು. ನೀವು ಅವರ ಅಧರಕ್ಕೆ ಹತ್ತಿರ, ಹೃದಯಕ್ಕೆ ದೂರ.</verse>
				<verse number="3">ಸರ್ವೇಶ್ವರಾ, ನನ್ನ ಪರಿಚಯ ನಿಮಗಿದೆ ನಿಮ್ಮ ನೋಟ ನನ್ನ ಮೇಲಿದೆ. ನನ್ನ ಹೃದಯ ನಿಮ್ಮೊಂದಿಗಿದೆ, ಇದರ ಪರೀಕ್ಷೆ ನಿಮ್ಮಿಂದಾಗಿದೆ. ಅವರನ್ನೋ, ಕುರಿಗಳೋ ಎಂಬಂತೆ ಕೊಲೆಗೆ ಕರೆದೊಯ್ಯಿರಿ ವಧ್ಯದಿವಸದವರೆಗೂ ಅವರನ್ನು ವಿಂಗಡಿಸಿಡಿ.</verse>
				<verse number="4">ಇನ್ನೆಷ್ಟರವರೆಗೆ ನಾಡು ದುಃಖಿಸುತ್ತಿರಬೇಕು? ಅದರ ಎಲ್ಲೆಎಲ್ಲೆಗಳಲ್ಲಿ ಹುಲ್ಲು ಸೊಪ್ಪು ಒಣಗಿರಬೇಕು? ನಾಡಜನರ ನೀಚತನದ ನಿಮಿತ್ತ ಮಾಯವಾಗಿವೆ ಪ್ರಾಣಪಕ್ಷಿಗಳು ಕೂಡ. ‘ನಮ್ಮ ನಡತೆಯನ್ನು ಗಮನಿಸರು ದೇವರು’ ಎಂದುಕೊಳ್ಳುತ್ತಿರುವರು ಆ ಜನರು.</verse>
				<verse number="5">(ಆಗ ಸರ್ವೇಶ್ವರ ನನಗೆ): “ಕಾಲಾಳುಗಳ ಸಂಗಡ ಓಡಲು ಆಯಾಸಗೊಂಡೆಯಾದರೆ ಕುದುರೆಗಳೊಂದಿಗೆ ಓಡಿ ಹೇಗೆ ಹೋರಾಡುವೆ? ಪ್ರಶಾಂತ ಪ್ರದೇಶದಲ್ಲಿ ನಿರ್ಭಯನಾಗಿ ನಿಲ್ಲಲಾರೆಯಾದರೆ ಜೋರ್ಡಾನಿನ ದಟ್ಟ ಅಡವಿಯಲ್ಲಿ ಏನು ಮಾಡಬಲ್ಲೆ?</verse>
				<verse number="6">ನಿನ್ನ ಸೋದರರೇ, ನಿನ್ನ ತೌರುಮನೆಯವರೇ ನಿನಗೆ ದ್ರೋಹವೆಸಗಿದ್ದಾರೆ. ಇವರೇ ನಿನ್ನ ಬೆನ್ನಟ್ಟಿಬಂದು ಧಿಕ್ಕಾರ ಕೂಗಿದ್ದಾರೆ. ಇಂತಿರಲು ಇವರು ಸವಿನುಡಿದರೂ ನಂಬಲೆಬೇಡ.”</verse>
				<verse number="7">“ನಾನು ನನ್ನ ಮನೆಯನ್ನೇ ತೊರೆದಿದ್ದೇನೆ ನನ್ನ ಸ್ವಂತ ಸೊತ್ತನ್ನೇ ನಿರಾಕರಿಸಿದ್ದೇನೆ ನನಗೆ ಪ್ರಾಣಪ್ರಿಯರಾದ ಜನರನ್ನು ಅವರ ಶತ್ರುಗಳ ಕೈಗೊಪ್ಪಿಸಿದ್ದೇನೆ.</verse>
				<verse number="8">ನನ್ನ ಸೊತ್ತಾದ ಜನತೆ ನನ್ನ ಪಾಲಿಗೆ ಅರಣ್ಯದ ಸಿಂಹದಂತೆ ನನಗೆದುರಾಗಿ ಅದು ಗರ್ಜಿಸಿದೆ, ಎಂದೇ ಅದನ್ನು ಹಗೆಮಾಡಿರುವೆ.</verse>
				<verse number="9">ನನ್ನ ಸೊತ್ತಾದ ಜನತೆ ನನ್ನ ದೃಷ್ಟಿಗೆ ಚಿತ್ರವರ್ಣದ ಪಕ್ಷಿಯಂತೆ ಅದರ ಸುತ್ತ ರಣಹದ್ದುಗಳ ಕೂಟ ಸೇರಿದೆ ಕಾಡುಮೃಗಗಳನ್ನೆಲ್ಲ ಕರೆದುತನ್ನಿ ಅದನ್ನು ತಿಂದುಬಿಡಲಿಕ್ಕೆ.</verse>
				<verse number="10">ಬಹುಮಂದಿ ಕುರಿಗಾಹಿಗಳು ಬಂದು ಹಾಳುಮಾಡಿದ್ದಾರೆ ನನ್ನ ದ್ರಾಕ್ಷಾತೋಟವನ್ನು. ತುಳಿದುಹಾಕಿದ್ದಾರೆ ನನ್ನಾ ಸೊತ್ತನ್ನು ಕಾಡನ್ನಾಗಿಸಿದ್ದಾರೆ ಆ ನನ್ನ ಪ್ರಿಯ ಆಸ್ತಿಯನ್ನು.</verse>
				<verse number="11">ಹೌದು, ಹಾಳುಮಾಡಿದ್ದಾರೆ ಪಾಳುಬಿದ್ದು ಅದು ನನಗೆ ಗೋಳಿಡುತ್ತಿದೆ ಯಾವನೂ ಗಮನಕ್ಕೆ ತಂದುಕೊಳ್ಳದೆ ನಾಡೆಲ್ಲ ಬಿಕೋ ಎನ್ನುತ್ತಿದೆ.</verse>
				<verse number="12">ನಾಡಿನ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಕೊಳ್ಳೆಗಾರರು ಕಾಡುಗುಡ್ಡೆಗಳ ಮೇಲೆಲ್ಲ ಕಂಡುಬಂದಿದ್ದಾರೆ. ಕಬಳಿಸಿಬಿಡುವುದು ನನ್ನ ಖಡ್ಗ ಯಾರಿಗು ನೆಮ್ಮದಿಯಿಲ್ಲದ ಹಾಗೆ.</verse>
				<verse number="13">ಜನರು ಗೋದಿಯನ್ನು ಬಿತ್ತಿದರು ಆದರೆ ಮುಳ್ಳುಗಿಡವನ್ನು ಕೊಯ್ದರು! ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರು ಆದರೆ ಯಾವ ಲಾಭವೂ ಗಿಟ್ಟದೆಹೋಯಿತು. ತಮ್ಮ ಬೆಳೆಯ ವಿಷಯವಾಗಿ ಹೇಸಬೇಕಾಯಿತು ನನ್ನ ಕೋಪಾಗ್ನಿಯೆ ಇದಕ್ಕೆ ಕಾರಣವಾಯಿತು.”</verse>
				<verse number="14">ಸರ್ವೇಶ್ವರ ಸ್ವಜನರಾದ ಇಸ್ರಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ: “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. (ಅವರ ಮಧ್ಯೆಯಿಂದ ಕಿತ್ತುಬಿಡುವೆನು ಯೆಹೂದ ವಂಶವನ್ನು).</verse>
				<verse number="15">ಆದರೆ ಅವರನ್ನು ಕಿತ್ತುಹಾಕಿದ ಮೇಲೆ ಮತ್ತೆ ಅವರಿಗೆ ಕನಿಕರಿಸುವೆನು. ಪ್ರತಿಯೊಬ್ಬನನ್ನು ಅವನವನ ಆಸ್ತಿಪಾಸ್ತಿಗೆ ಅವನವನ ನಾಡಿಗೆ ಮರಳಿ ಬರಮಾಡುವೆನು.</verse>
				<verse number="16">ನನ್ನ ಜನರಿಗೆ ಬಾಳ್‍ದೇವತೆಯ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ಮೊದಲು ಕಲಿಸಿಕೊಟ್ಟವರು ಇವರೇ. ಈಗ ನನ್ನ ಜನರ ಮಾರ್ಗವನ್ನು ಅವಲಂಬಿಸಿ ನನ್ನ ಹೆಸರೆತ್ತಿ, “ಸರ್ವೇಶ್ವರನ ಜೀವದಾಣೆ” ಎಂದು ಪ್ರಮಾಣ ಮಾಡುವುದನ್ನು ಕಲಿತರೆ ನನ್ನ ಜನರ ನಡುವೆ ನೆಲೆಗೊಂಡು ವೃದ್ಧಿಯಾಗುವರು.</verse>
				<verse number="17">ಆದರೆ ಯಾವ ಜನಾಂಗ ಕೇಳುವುದಿಲ್ಲವೋ ಅದನ್ನು ನಾನು ಕಿತ್ತುಹಾಕುವೆನು. ಹೌದು, ಬೇರುಸಹಿತ ಕಿತ್ತುಹಾಕಿ ನಾಶಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”</verse>
			</chapter>
			<chapter number="13">
				<verse number="1">ಸರ್ವೇಶ್ವರ ಸ್ವಾಮಿ ನನಗೆ: “ನೀನು ಹೋಗಿ ನಾರಿನ ನಡುಕಟ್ಟು ಒಂದನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೊ. ಅದನ್ನು ನೀರಿನಲ್ಲಿ ನೆನೆಸಬೇಡ,” ಎಂದು ಅಪ್ಪಣೆಕೊಟ್ಟರು.</verse>
				<verse number="2">ನಾನು ಅವರ ಮಾತಿನಂತೆ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೊಂಡೆ.</verse>
				<verse number="3">ಆಮೇಲೆ, “ನೀನು ಸೊಂಟಕ್ಕೆ ಬಿಗಿದ ಆ ನಡುಕಟ್ಟನ್ನು ತೆಗೆದುಕೊಂಡು ಯೂಫ್ರೆಟಿಸ್ ನದಿಗೆ ಹೋಗು. ಅದನ್ನು ಅಲ್ಲಿಯ ಬಂಡೆಯ ಸಂದಿನೊಳಗೆ ಬಚ್ಚಿಡು,” ಎಂಬುದಾಗಿ ಸರ್ವೇಶ್ವರ ಸ್ವಾಮಿಯ ಎರಡನೆಯ ಆದೇಶ ನನಗೆ ಬಂದಿತು.</verse>
				<verse number="4"></verse>
				<verse number="5">ಅವರ ಅಪ್ಪಣೆಯ ಮೇರೆಗೆ ನಾನು ಹೋಗಿ ಯೂಫ್ರೆಟಿಸ್ ನದಿಯ ಬಳಿಯಲ್ಲಿ ಅದನ್ನು ಬಚ್ಚಿಟ್ಟೆ.</verse>
				<verse number="6">ಬಹು ದಿನಗಳ ಮೇಲೆ ಸರ್ವೇಶ್ವರ ನನಗೆ, “ಹೊರಡು, ಯೂಫ್ರೆಟಿಸ್ ನದಿಗೆ ಹೋಗಿ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ,” ಎಂದು ಹೇಳಿದರು.</verse>
				<verse number="7">ಆಗ ನಾನು ಯೂಫ್ರೆಟಿಸ್ ನದಿಗೆ ಹೋಗಿ ಹುಡುಕಿ ನಾನು ಬಚ್ಚಿಟ್ಟ ಸ್ಥಳದಿಂದ ಆ ನಡುಕಟ್ಟನ್ನು ತೆಗೆದೆ. ಆದರೆ ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು.</verse>
				<verse number="8">ಆಗ ಸರ್ವೇಶ್ವರ ನನಗೆ ದಯಪಾಲಿಸಿದ ವಾಕ್ಯವೇನೆಂದರೆ:</verse>
				<verse number="9">“ಇದು ಸರ್ವೇಶ್ವರನಾದ ನನ್ನ ನುಡಿ - ಈ ಪ್ರಕಾರವಾಗಿಯೇ ನಾನು ಜುದೇಯದ ದೊಡ್ಡಸ್ತಿಕೆಯನ್ನು ಹಾಗು ಜೆರುಸಲೇಮಿನ ಘನವಾದ ದೊಡ್ಡಸ್ತಿಕೆಯನ್ನು ತೆಗೆದುಬಿಡುವೆನು.</verse>
				<verse number="10">ಈ ದುಷ್ಟಜನರು ನನ್ನ ಮಾತುಗಳನ್ನು ಕೇಳಲೊಲ್ಲರು. ತಮ್ಮ ಹೃದಯದ ಒರಟುತನದಂತೆ ನಡೆದುಬರುತ್ತಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸಿ, ಪೂಜಿಸುತ್ತಿದ್ದಾರೆ. ಇವರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು.</verse>
				<verse number="11">ಇಸ್ರಯೇಲ್ ವಂಶವೆಲ್ಲವು ಹಾಗು ಜುದೇಯ ವಂಶವೆಲ್ಲವು ನನಗೆ ಪ್ರಜೆಯಾಗಿರಲಿ; ನನಗೆ ಕೀರ್ತಿ, ಗೌರವ ತರಲಿ, ನನಗೆ ಆಭರಣವಾಗಿರಲಿ ಎಂದುಕೊಂಡೆ. ನಡುಕ್ಟಟನ್ನು ಸೊಂಟಕ್ಕೆ ಬಿಗಿದುಕೊಳ್ಳುವಂತೆ ಇವರನ್ನು ಬಿಗಿದುಕೊಂಡಿದ್ದೆ. ಆದರೂ ಇವರು ನನಗೆ ಕಿವಿಗೊಡದೆಹೋದರು. ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="12">“ಯೆರೆಮೀಯನೇ, ನೀನು ಅವರಿಗೆ ಹೀಗೆಂದು ಸಾರು: ಇಸ್ರಯೇಲಿನ ದೇವರಾದ ಸರ್ವೇಶ್ವರ ಸ್ವಾಮಿಯ ಸಂದೇಶವನ್ನು ಕೇಳಿ - ‘ಪ್ರತಿಯೊಂದು ಕುಡಿಕೆಯು ದ್ರಾಕ್ಷಾರಸದಿಂದ ತುಂಬಿರುವುದು.’ ಆಗ ಅವರು ನಿನಗೆ - ‘ಪ್ರತಿಯೊಂದು ಕುಡಿಕೆ ದ್ರಾಕ್ಷಾರಸದಿಂದ ತುಂಬಿರುವುದು ಎಂಬುದು ನಮಗೆ ಗೊತ್ತಿಲ್ಲವೆ?’ ಎಂದು ಹೇಳುವರು.</verse>
				<verse number="13">ಆಗ ನೀನು ಅವರಿಗೆ - ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಕೇಳಿ: ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ ಯಾಜಕರನ್ನೂ ಪ್ರವಾದಿಗಳನ್ನೂ ಜೆರುಸಲೇಮಿನ ಎಲ್ಲ ನಿವಾಸಿಗಳನ್ನೂ, ಅಂತು ನಾಡಿನ ಜನರೆಲ್ಲರನ್ನೂ ಅಮಲಿನಿಂದ ಮತ್ತರಾಗುವಂತೆ ಮಾಡುವೆನು.</verse>
				<verse number="14">ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ಹಾಗು ನಾಶಮಾಡದೆ ಬಿಡೆನು,’ ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="15">ಜನರೇ, ಕಿವಿಗೊಡಿ, ಹೆಮ್ಮೆಪಡಬೇಡಿ, ಸರ್ವೇಶ್ವರನೇ ನಿಮಗೆ ಕೊಡುವ ಆದೇಶ ಇದು:</verse>
				<verse number="16">ನಿಮ್ಮ ದೇವರಾದ ಸರ್ವೇಶ್ವರನಿಗೆ ಸಲ್ಲಿಸಿ ಗೌರವವನ್ನು ಇಲ್ಲವಾದರೆ ಆತ ಬರಮಾಡುವನು ಸ್ವಲ್ಪಕಾಲದಲ್ಲೇ ಕತ್ತಲನ್ನು. ನಿಮ್ಮ ಕಾಲುಗಳು ಮುಗ್ಗರಿಸುವುವು ಮಬ್ಬಿನ ಗುಡ್ಡಗಳ ನಡುವೆ.</verse>
				<verse number="17">ನೀವು ಕಿವಿಗೊಡದಿದ್ದರೆ ನಿಮ್ಮ ಗರ್ವದ ನಿಮಿತ್ತ ನನ್ನ ಮನ ಗೋಳಾಡುವುದು ಗುಟ್ಟಾಗಿ. ನೀವು ಸೆರೆಯಾಗಿ ಹೋಗುವುದರಿಂದ ಅಳುವೆನು ಸರ್ವೇಶ್ವರನ ಮುಂದೆ ಬಹಳವಾಗಿ. ನನ್ನ ಕಣ್ಣುಗಳಿಂದ ಕಂಬನಿ ಹರಿವುದು ಧಾರಾಕಾರವಾಗಿ.</verse>
				<verse number="18">ಸರ್ವೇಶ್ವರ ನನಗೆ ಹೀಗೆಂದರು: “ರಾಜನಿಗೂ ರಾಜಮಾತೆಗೂ ಈ ವರ್ತಮಾನವನ್ನು ತಿಳಿಸು - ‘ನೀವು ಇಳಿದುಬಂದು ನೆಲದಲ್ಲಿ ಕುಳಿತುಕೊಳ್ಳಿ. ನಿಮ್ಮ ಚೆಲುವಾದ ಕಿರೀಟ ಬಿದ್ದುಹೋಗಿದೆ ತಲೆಯಿಂದ.</verse>
				<verse number="19">ದಕ್ಷಿಣ ನಾಡಿನ ನಗರಗಳು ಮುತ್ತಿಗೆಗೆ ತುತ್ತಾಗಿವೆ. ಅವುಗಳನ್ನು ಬಿಡಿಸಲು ಯಾರೂ ಇಲ್ಲ. ಜುದೇಯವೆಲ್ಲ ಸೆರೆಹೋಗಿದೆ; ಸಂಪೂರ್ಣವಾಗಿ ಸೆರೆಯಾಗಿದೆ’.”</verse>
				<verse number="20">“ಜೆರುಸಲೇಮ್, ಕಣ್ಣೆತ್ತಿ ನೋಡು, ಉತ್ತರದಿಂದ ಬರುವವರನ್ನು ನೋಡು. ನಿನಗೆ ಒಪ್ಪಿಸಿದ ಹಿಂಡು, ಅಂದವಾದ ಆ ನಿನ್ನ ಹಿಂಡು ಎಲ್ಲಿ?</verse>
				<verse number="21">ನಿನ್ನೊಡನೆ ಗೆಳೆಯರಂತೆ ಬಾಳಲು ನೀನೇ ಪಳಗಿಸಿದವರನ್ನು ನಿನಗೆ ಒಡೆಯರನ್ನಾಗಿ ನಾನು ನೇಮಿಸುವಾಗ ಏನು ಹೇಳುವೆ? ಹೆರುವವಳಿಗೆ ಬರುವಂಥ ವೇದನೆ ಆಗ ನಿನಗೆ ಬರದೆ ಇರುವುದೆ?</verse>
				<verse number="22">ಇವು ನನಗೇಕೆ ಸಂಭವಿಸಿದವು ಎಂದು ಮನದೊಳಗೇ ನೀನು ಅಂದುಕೊಳ್ಳುವೆ. ನೀನು ಮಾಡಿದುದು ಮಹಾಪಾಪ! ಆದ್ದರಿಂದ ನಿನ್ನ ಉಡುಗೆಯನ್ನೇ ಕೀಳಲಾಗುವುದು. ನೀನು ಅತ್ಯಾಚಾರಕ್ಕೆ ಈಡಾಗುವೆ.</verse>
				<verse number="23">ಎಥಿಯೋಪಿಯದವನು ತನ್ನ ಚರ್ಮದ ಬಣ್ಣವನ್ನು ಮಾರ್ಪಡಿಸಬಲ್ಲನೆ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸೀತೆ? ಅಂತೆಯೇ ದುಷ್ಟತನದಲ್ಲಿ ಅಷ್ಟಾಗಿ ನುರಿತ ನೀನು ಶಿಷ್ಟತನದಲ್ಲಿ ನಡೆಯಲಾರೆ.</verse>
				<verse number="24">ಆದಕಾರಣ ಬಿರುಗಾಳಿ ಬಡಿದುಕೊಂಡುಹೋಗುವ ಒಣಹುಲ್ಲೋ ಎಂಬಂತೆ ಸರ್ವೇಶ್ವರನಾದ ನಾನು ನಿನ್ನನ್ನು ಚದರಿಸಿಬಿಡುವೆನು.</verse>
				<verse number="25">ನೀನು ನನ್ನನ್ನು ಮರೆತುಬಿಟ್ಟು ಸುಳ್ಳನ್ನು ನಂಬಿದ್ದರಿಂದ ಇದೇ ನಿನಗೆ ಒದಗಲಿರುವ ಗತಿ. ಇದೇ ನಾನು ನಿನಗೆ ಅಳೆದುಕೊಡುವ ಪ್ರತೀಕಾರ.</verse>
				<verse number="26">ನಿನ್ನ ಉಡುಗೆಯನ್ನು ನಿನ್ನ ಕಣ್ಮುಂದೆಯೇ ಕೀಳಿಸುವೆನು. ನೀನು ಅತ್ಯಾಚಾರಕ್ಕೆ ಈಡಾಗುವೆ.</verse>
				<verse number="27">ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ಕೀಳಾದ ನಿನ್ನ ಸೂಳೆಗಾರಿಕೆಯನ್ನು, ಗುಡ್ಡೆ, ಕಣಿವೆಗಳಲ್ಲಿ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಜೆರುಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲಬೇಕು?”</verse>
			</chapter>
			<chapter number="14">
				<verse number="1">ಬರಗಾಲದ ಬಗ್ಗೆ ಸರ್ವೇಶ್ವರ ಯೆರೆಮೀಯನಿಗಿತ್ತ ಸಂದೇಶ:</verse>
				<verse number="2">“ಜುದೇಯ ನಾಡು ದುಃಖಿಸುತ್ತಿದೆ ಅದರ ಪುರದ್ವಾರಗಳು ಬಹಳ ಕಪ್ಪಾಗಿವೆ. ಜೆರುಸಲೇಮಿನವರ ಗೋಳಾಟ ಕೇಳಿಸುತ್ತಿದೆ.</verse>
				<verse number="3">ಅವರಲ್ಲಿನ ಶ್ರೀಮಂತರು ತಮ್ಮ ಊಳಿಗದವರನ್ನು ನೀರಿಗೆ ಕಳಿಸುತ್ತಾರೆ. ಅವರೋ ಕೊಳಗಳಲ್ಲಿ ನೀರು ಕಾಣದೆ ಬರೀ ಬಿಂದಿಗೆಗಳೊಂದಿಗೆ ಹಿಂದಿರುಗುತ್ತಾರೆ. ನಿರಾಶೆಗೊಂಡು, ನಾಚಿಕೆಪಟ್ಟು ಮೋರೆ ಮುಚ್ಚಿಕೊಳ್ಳುತ್ತಾರೆ.</verse>
				<verse number="4">ನಾಡಿನಲ್ಲಿ ಮಳೆಯಿಲ್ಲದೆ ಭೂಮಿ ಬಿರುಕುಬಿಟ್ಟಿದೆ ನೇಗಿಲಯೋಗಿ ನಿರಾಶೆಗೊಂಡು ಮೋರೆ ಮುಚ್ಚಿಕೊಳ್ಳುತ್ತಾನೆ.</verse>
				<verse number="5">ಕಾಡಿನಲ್ಲಿ ಹುಲ್ಲಿಲ್ಲದ ಕಾರಣ ತಾಯಿಹುಲ್ಲೆ ಮರಿಹಾಕಿ ಮರೆಯಾಗುತ್ತದೆ.</verse>
				<verse number="6">ಕಾಡುಗತ್ತೆಗಳು ಬೋಳುಗುಡ್ಡಗಳಲ್ಲಿ ನಿಂತು ನಿಟ್ಟುಸಿರು ಬಿಡುತ್ತವೆ ನರಿಗಳಂತೆ ಗಾಳಿಕೋರುತ್ತವೆ, ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ”</verse>
				<verse number="7">ಸರ್ವೇಶ್ವರಾ, ನಮ್ಮ ದ್ರೋಹಗಳು ಹಲವು ನಿಮಗೆ ವಿರುದ್ಧ ಪಾಪಮಾಡಿದೆವು. ನಮ್ಮ ಅಪರಾಧಗಳೇ ನಮಗೆ ವಿರುದ್ಧ ಸಾಕ್ಷಿ ನೀಡುತ್ತಿವೆ ಆದರೂ ನಿಮ್ಮ ನಾಮದ ನಿಮಿತ್ತ ಕೈನೀಡು ನಮಗೆ.</verse>
				<verse number="8">ಸರ್ವೇಶ್ವರಾ, ಇಸ್ರಯೇಲರಿಗೆ ನೀವೇ ನಿರೀಕ್ಷೆ ಇಕ್ಕಟ್ಟಿನಲ್ಲಿ ಅವರಿಗೆ ನೀವೇ ರಕ್ಷೆ. ನಾಡಿನಲ್ಲಿ ಅನ್ಯದೇಶೀಯನಂತಿರುವಿರಿ, ಏಕೆ? ರಾತ್ರಿ ಕಳೆಯಲು ಗುಡಾರಹಾಕಿದ ಪ್ರಯಾಣಿಕನಂತಿರುವಿರಿ, ಏಕೆ?</verse>
				<verse number="9">ದಿಕ್ಕು ತೋಚದವನಂತೆ ನಿಶ್ಚಲರಾಗಿರುವಿರಿ, ಏಕೆ? ರಕ್ಷಿಸಲಾಗದ ರಣಧೀರನಂತಿರುವಿರಿ, ಏಕೆ? ಆದರೂ ಸರ್ವೇಶ್ವರಾ, ನೀವು ನಮ್ಮ ಮಧ್ಯೆ ಇರುವಿರಿ; ನಾವು ನಿಮ್ಮ ಹೆಸರಿನವರು, ನಮ್ಮನ್ನು ಕೈಬಿಡಬೇಡಿ.</verse>
				<verse number="10">ಈ ಜನರನ್ನು ಕುರಿತು ಸರ್ವೇಶ್ವರ ನನಗೆ ಹೇಳಿದ ಮಾತುಗಳು: “ಇವರು ಅಲೆದಾಡಲು ಇಷ್ಟಪಡುವ ಜನರು. ತಮ್ಮ ಕಾಲಿನ ಮೇಲೆ ಹತೋಟಿಯಿಲ್ಲದವರು. ಆದಕಾರಣ ಸರ್ವೇಶ್ವರನಾದ ನಾನು ಇವರನ್ನು ಕರುಣೆಯಿಂದ ನೋಡುವುದಿಲ್ಲ. ಇದೀಗಲೆ ಇವರ ಅಪರಾಧಗಳನ್ನು ನೆನಪಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು.”</verse>
				<verse number="11">ಸರ್ವೇಶ್ವರ ಮತ್ತೆ ನನಗೆ: “ಈ ಜನರ ಹಿತವನ್ನು ಬಯಸಿ ಇವರಿಗೋಸ್ಕರ ಪ್ರಾರ್ಥನೆಮಾಡಬೇಡ.</verse>
				<verse number="12">ಇವರು ಉಪವಾಸ ಕೈಗೊಂಡರೂ ಇವರ ಮೊರೆಯನ್ನು ನಾನು ಕೇಳುವುದಿಲ್ಲ. ದಹನಬಲಿಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸಿದರೂ ಸ್ವೀಕರಿಸುವುದಿಲ್ಲ. ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಇವರನ್ನು ಮುಗಿಸಿಬಿಡುತ್ತೇನೆ,” ಎಂದು ಹೇಳಿದರು.</verse>
				<verse number="13">ಆಗ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ಈ ಜನರಿಗೆ, ‘ಖಡ್ಗ ನಿಮ್ಮ ಕಣ್ಣಿಗೂ ಕಾಣಿಸದು, ಕ್ಷಾಮ ನಿಮಗೆಂದಿಗೂ ಬಂದೊದಗದು. ಸರ್ವೇಶ್ವರ ಈ ನಾಡಿನಲ್ಲೆ ನಿಮಗೆ ಚಿರಶಾಂತಿ ಸಮಾಧಾನವನ್ನು ಕೊಡುವರು’ ಎಂದು ಪ್ರವಾದಿಗಳೇ ನುಡಿಯುತ್ತಿದ್ದಾರೆ,” ಎಂದು ಹೇಳಿದೆನು.</verse>
				<verse number="14">ಅದಕ್ಕೆ ಸರ್ವೇಶ್ವರ ನನಗೆ: “ಪ್ರವಾದಿಗಳು ನನ್ನ ಹೆಸರೆತ್ತಿ ಸುಳ್ಳು, ಪ್ರವಾದನೆ ಮಾಡುತ್ತಿದ್ದಾರೆ. ನಾನು ಅವರನ್ನು ಕಳಿಸಲಿಲ್ಲ, ಅವರಿಗೆ ಅಪ್ಪಣೆಕೊಟ್ಟಿಲ್ಲ. ಅವರೊಡನೆ ಮಾತಾಡಿದ್ದಿಲ್ಲ. ಅವರು ಕಳ್ಳದರ್ಶನಗಳನ್ನು, ಕಣಿಗಳನ್ನು, ಮಾಯಮಂತ್ರಗಳನ್ನು ಹಾಗು ತಾನೇ ಕಲ್ಪಿಸಿಕೊಂಡ ಕಪಟವನ್ನು ನಿಮಗೆ ಪ್ರಕಟಿಸುತ್ತಿದ್ದಾರೆ.</verse>
				<verse number="15">ಆದುದರಿಂದ ನನ್ನ ಅಪ್ಪಣೆಯಿಲ್ಲದೆ, ನನ್ನ ಹೆಸರೆತ್ತಿ, ಪ್ರವಾದನೆ ಮಾಡುತ್ತಾ ಖಡ್ಗವಾಗಲಿ, ಕ್ಷಾಮವಾಗಲಿ ಈ ನಾಡಿಗೆ ಬರುವುದಿಲ್ಲ ಎಂದು ಬೋಧಿಸುತ್ತಿದ್ದಾರಲ್ಲವೆ? ಆ ಪ್ರವಾದಿಗಳ ವಿಷಯದಲ್ಲಿ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ - ಖಡ್ಗದಿಂದಲೆ, ಕ್ಷಾಮದಿಂದಲೆ ಆ ಪ್ರವಾದಿಗಳು ನಾಶವಾಗುವರು.</verse>
				<verse number="16">ಅವರ ಪ್ರವಾದನೆಗೆ ಕಿವಿಗೊಡುವ ಜನರು ಕೂಡ ಕ್ಷಾಮಖಡ್ಗಗಳಿಗೆ ತುತ್ತಾಗುವರು. ಜೆರುಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು. ಅವರನ್ನೂ ಅವರ ಮಡದಿ ಮಕ್ಕಳನ್ನೂ ಹೂಣಲು ಸಹ ಯಾರೂ ಇರುವುದಿಲ್ಲ. ಅವರ ದುಷ್ಟತನವನ್ನು ಅವರ ಮೇಲೆಯೆ ಸುರಿದುಬಿಡುವೆನು.”</verse>
				<verse number="17">“ನೀನು ನಿನ್ನ ದುಃಖವನ್ನು ಅವರಿಗೆ ಹೀಗೆಂದು ವ್ಯಕ್ತಪಡಿಸು - ‘ರಾತ್ರಿಹಗಲು ನನ್ನ ಕಣ್ಣೀರು ಸುರಿಯಲಿ ನಿರಂತರವಾಗಿ ಏಕೆಂದರೆ ನನ್ನ ಜನವೆಂಬ ಯುವತಿ ಗಾಯಗೊಂಡಿದ್ದಾಳೆ ತೀವ್ರವಾಗಿ, ಹೌದು, ಅವಳಿಗೆ ಪೆಟ್ಟುಬಿದ್ದಿದೆ ಗಡುಸಾಗಿ.</verse>
				<verse number="18">ಊರುಬಿಟ್ಟು ಹೊರಗೆ ಹೋದರೆ ಅಲ್ಲಿ ಕಾಣಿಸುತ್ತಾರೆ ಖಡ್ಗದಿಂದ ಸತ್ತವರು. ಊರ ಒಳಗೆ ಬಂದರೆ ಅಲ್ಲಿ ಕಾಣಿಸುತ್ತಾರೆ ಕ್ಷಾಮದಿಂದ ನರಳುವವರು. ಅಪರಿಚಿತನಾಡಿಗೆ ಗಡೀಪಾರಾಗಿದ್ದಾರೆ ಪ್ರವಾದಿಗಳು ಮತ್ತು ಯಾಜಕರು’.”</verse>
				<verse number="19">“ಸ್ವಾಮೀ, ನೀವು ಜುದೇಯವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರೊ? ಸಿಯೋನಿನ ಬಗ್ಗೆ ನಿಮಗೆ ಮನಃಪೂರ್ವಕವಾದ ಅಸಹ್ಯ ಹುಟ್ಟಿದೆಯೊ? ಗುಣವಾಗದಂಥ ಪೆಟ್ಟನ್ನು ನಮಗೆ ಕೊಟ್ಟಿರುವಿರಿ ಏಕೆ? ಸುಖವನ್ನು ನಿರೀಕ್ಷಿಸಿದೆವು, ಸಿಗಲಿಲ್ಲ ನಮಗೆ ಯಾವ ಫಲ. ಸುಕ್ಷೇಮವನ್ನು ಎದುರು ನೋಡಿದೆವು, ಇಗೋ ಬಂದೊದಗಿದೆ ಸಂಕಟ.</verse>
				<verse number="20">ಹೇ ಸರ್ವೇಶ್ವರಾ, ಒಪ್ಪಿಕೊಂಡಿದ್ದೇವೆ ನಮ್ಮ ದುಷ್ಟತನವನ್ನು ನಮ್ಮ ಪೂರ್ವಜರು ಎಸಗಿದ ದುರಾಚಾರವನ್ನು ನಾವು ಮಾಡಿದ ಪಾಪ ನಿಮಗೆ ವಿರುದ್ಧವೆಂಬುದನ್ನು.</verse>
				<verse number="21">ನಿಮ್ಮ ನಾಮವನ್ನು ಮುಂದಿಟ್ಟು, ನಮಗೆ ಅವಮಾನ ಮಾಡಬೇಡಿ ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ ನಮ್ಮೊಡನೆ ಮಾಡಿದ ಒಡಂಬಡಿಕೆಯನ್ನು ನೆನೆಯಿರಿ. ಅದನ್ನು ಭಂಗಪಡಿಸಬೇಡಿ.</verse>
				<verse number="22">ಅನ್ಯಜನಾಂಗಗಳ ಶೂನ್ಯದೇವತೆಗಳಲ್ಲಿ ಮಳೆಸುರಿಸಬಲ್ಲವರುಂಟೆ? ಆಕಾಶವು ತಾನಾಗಿ ಹದಮಳೆಯನ್ನು ಬರಮಾಡಬಲ್ಲುದೆ? ನಮ್ಮ ದೇವರಾದ ಸರ್ವೇಶ್ವರಾ, ವೃಷ್ಟಿದಾತರು ನೀವೇ ನಾವು ನಿರೀಕ್ಷಿಸುತ್ತಿರುವುದು ನಿಮ್ಮನ್ನೇ ಹೌದು, ಇವುಗಳನ್ನೆಲ್ಲ ನಡೆಸುವವರು ನೀವೇ.</verse>
			</chapter>
			<chapter number="15">
				<verse number="1">ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು: “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ!</verse>
				<verse number="2">‘ನಾವೆಲ್ಲಿಗೆ ಹೋಗಬೇಕು?’ ಎಂದು ಕೇಳಿಯಾರು. ಆಗ ನೀನು ಅವರಿಗೆ: ‘ಇದು ಸರ್ವೇಶ್ವರನ ಸಂದೇಶ: ಮರಣವ್ಯಾಧಿಗೆ ಗೊತ್ತಾದವರು ಮರಣವ್ಯಾಧಿಗೆ ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಕ್ಷಾಮಕ್ಕೆ ಗೊತ್ತಾದವರು ಕ್ಷಾಮಕ್ಕೆ ಸೆರೆಗೆ ಗೊತ್ತಾದವರು ಸೆರೆಗೆ ಗುರಿಯಾಗಿ ಸಾಯುವರು’ ಎಂದು ಹೇಳು.</verse>
				<verse number="3">“ನಾನು ಅವರಿಗೆ ನಾಲ್ಕು ವಿಧವಾದ ಬಾಧೆಗಳನ್ನು ವಿಧಿಸುವೆನು: ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಯನ್ನು, ನುಂಗಿ ನಾಶಮಾಡುವುದಕ್ಕೆ ಪ್ರಾಣಿಪಕ್ಷಿಗಳನ್ನು ನೇಮಿಸುವೆನು.</verse>
				<verse number="4">ಈ ಜನರನ್ನು ಜಗದ ರಾಜ್ಯಗಳೆಲ್ಲವು ಭಯೋತ್ಪಾದಕರೆಂದು ಭಾವಿಸುವಂತೆ ಮಾಡುವೆನು. ಹಿಜ್ಕೀಯನ ಮಗನು ಹಾಗು ಜುದೇಯದ ಅರಸನು ಆದ ಮನಸ್ಸೆಯು ಜೆರುಸಲೇಮಿನಲ್ಲಿ ನಡೆಸಿದ ದುಷ್ಕೃತ್ಯಕ್ಕೆ ಇದು ಪ್ರತೀಕಾರವಾಗಿರುವುದು.”</verse>
				<verse number="5">“ಜೆರುಸಲೇಮೆ, ನಿನಗೆ ಕರುಣೆ ತೋರುವವರಾರು? ನಿನ್ನ ಪರಿಸ್ಥಿತಿಯನ್ನು ಕಂಡು ಪ್ರಲಾಪಿಸುವವರಾರು? ತಿರುಗಿ ನೋಡಿ ನಿನ್ನ ಕ್ಷೇಮವನ್ನು ವಿಚಾರಿಸುವವರಾರು?</verse>
				<verse number="6">ಸರ್ವೇಶ್ವರನಾದ ನನ್ನ ಈ ಮಾತುಗಳನ್ನು ಕೇಳು: ನೀನು ನನ್ನನ್ನು ಅಲ್ಲಗಳೆದು ನನಗೆ ವಿಮುಖಳಾಗಿರುವೆ. ಆದಕಾರಣ ನಿನ್ನನ್ನು ನಾಶಮಾಡಲು ಕೈಯೆತ್ತಿರುವೆ ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಗಿದೆ ನನಗೆ.</verse>
				<verse number="7">ನನ್ನ ಜನರನ್ನು ನಾಡಿನ ಉಕ್ಕಡಗಳಲ್ಲಿ ಮೊರದಿಂದ ಗಾಳಿಗೆ ತೂರಿಬಿಟ್ಟೆನು. ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸಿದೆನು. ಏಕೆಂದರೆ, ಅವರು ತಮ್ಮ ದುರ್ಮಾರ್ಗದಿಂದ ಹಿಂದಿರುಗದೆ ಹೋದರು.</verse>
				<verse number="8">ಅವರ ವಿಧವೆಯರು ನನ್ನ ಭಾಗಕ್ಕೆ ಕಡಲ ಮರಳಿನಂತೆ ಯುವಜನರಿಗೆ ಸಾವು ಬರಮಾಡಿದೆ ನಡುಜೀವನದಲ್ಲೆ. ಅವರ ತಾಯಂದಿರನ್ನು ದುಃಖಕ್ಕೆ ಈಡುಮಾಡಿದೆ ತಟ್ಟನೆ ಅವರನ್ನು ಕಳವಳಕ್ಕೂ ದಿಗಿಲಿಗೂ ಗುರಿಪಡಿಸಿದೆ.</verse>
				<verse number="9">ಏಳು ಮಕ್ಕಳನ್ನು ಕಳೆದುಕೊಂಡ ತಾಯಿ ಪ್ರಾಣಬಿಟ್ಟಂತಿದ್ದಾಳೆ ದುಃಖದಿಂದ ಬಳಲಿ ಅವಳ ಪಾಲಿಗೆ ಸೂರ್ಯ ಮುಳುಗಿದ್ದಾನೆ ಹಾಡುಹಗಲಲ್ಲೆ. ಆಶಾಭಂಗಪಟ್ಟಿದ್ದಾಳೆ, ಅವಮಾನಕ್ಕೆ ಈಡಾಗಿದ್ದಾಳೆ. ಖಡ್ಗಕ್ಕೆ ಗುರಿಮಾಡುವೆ ಅವಳ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿಗೆ. ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="10">“ನನ್ನ ಹೆತ್ತತಾಯೇ, ನನ್ನ ಗತಿಯನ್ನು ಏನು ಹೇಳಲಿ! ಜಗದ ಜನರಿಗೆಲ್ಲ ನಾನೊಬ್ಬ ಜಗಳಗಂಟಿಗ, ವ್ಯಾಜ್ಯಗಾರ. ನಾನು ಹಣವನ್ನು ಸಾಲವಾಗಿ ಕೊಟ್ಟವನಲ್ಲ, ಕೊಂಡವನೂ ಅಲ್ಲ. ಆದರೂ ನನ್ನನ್ನು ಎಲ್ಲರು ಶಪಿಸುವವರೇ.</verse>
				<verse number="11">ಸರ್ವೇಶ್ವರಾ, ನಾನು ನಿಮಗೆ ಶ್ರೇಷ್ಠವಾದ ಸೇವೆಸಲ್ಲಿಸದೆ ಹೋಗಿದ್ದರೆ, ನನ್ನ ಶತ್ರುಗಳು ಕಷ್ಟಸಂಕಟಗಳಲ್ಲಿ ಸಿಕ್ಕಿಬಿದ್ದ ಕಾಲದಲ್ಲಿ ಅವರ ಪರವಾಗಿ ನಿನಗೆ ಮೊರೆಯಿಡದೆ ಇದ್ದಿದ್ದರೆ ನನಗೆ ಶಾಪ ತಗುಲಲಿ!</verse>
				<verse number="12">ಕಬ್ಬಿಣವನ್ನು ಅದೂ ಉತ್ತರದಿಂದ ಬಂದ ಕಬ್ಬಿಣವನ್ನು ಹಾಗು ಕಂಚನ್ನು ಬಗ್ಗಿಸಲು ಯಾರಿಂದಾದೀತು?”</verse>
				<verse number="13">ಸರ್ವೇಶ್ವರ: “ನಾಡಿನಾದ್ಯಂತ ನನ್ನ ಜನರು ಮಾಡಿದ ಎಲ್ಲ ಪಾಪಗಳ ನಿಮಿತ್ತ ಅವರ ಸೊತ್ತು ಸಂಪತ್ತನ್ನು ಪುಕ್ಕಟೆಯಾಗಿ ಕೊಳ್ಳೆಗಾರರ ಪಾಲಾಗಿಸುವೆನು.</verse>
				<verse number="14">ಅಪರಿಚಿತ ನಾಡಿಗೆ ಅವರನ್ನು ಸಾಗಿಸುವೆನು. ಅಲ್ಲಿ ಶತ್ರುಗಳಿಗೇ ಊಳಿಗದವರನ್ನಾಗಿಸುವೆನು. ಏಕೆಂದರೆ ನನ್ನ ಕೋಪಾಗ್ನಿ ಉರಿಯುತ್ತಿದೆ. ಅದು ನಿಮ್ಮನ್ನು ಸುಟ್ಟುಹಾಕುವುದು.”</verse>
				<verse number="15">ಅದಕ್ಕೆ ನಾನು: “ಸರ್ವೇಶ್ವರಾ, ನೀವು ಎಲ್ಲವನ್ನು ಬಲ್ಲವರು. ನನ್ನನ್ನು ನೆನಪಿಗೆ ತಂದುಕೊಂಡು ನೆರವುನೀಡಿ. ನನಗಾಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸಿರಿ. ಅವರಿಗೆ ಹೆಚ್ಚು ತಾಳ್ಮೆತೋರಿ ನನ್ನನ್ನು ನಿರ್ಮೂಲಮಾಡಬೇಡಿ. ನಿಮ್ಮ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆ ಎಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿ.</verse>
				<verse number="16">ನಿಮ್ಮ ವಚನಗಳು ನನಗೆ ದೊರೆತವು. ಅವುಗಳನ್ನು ಹಾಗೆಯೆ ನುಂಗಿಬಿಟ್ಟೆನು. ನಿಮ್ಮ ನುಡಿಗಳು ನನಗೆ ಹರ್ಷವನ್ನೂ ಹೃದಯಾನಂದವನ್ನೂ ತಂದವು. ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ನಾನು ನಿಮ್ಮ ನಾಮಧಾರಿಯಲ್ಲವೆ?</verse>
				<verse number="17">ವಿನೋದಗಾರರ ಕೂಟದಲ್ಲಿ ಭಾಗವಹಿಸಿ ನಾನು ಉಲ್ಲಾಸಪಟ್ಟವನಲ್ಲ. ನಿಮ್ಮ ಕೈ ನನ್ನ ಮೇಲೆ ಇದ್ದುದರಿಂದ ನಾನು ಒಬ್ಬಂಟಿಗನಾದೆ. ಕೋಪಾವೇಶದಿಂದ ತುಂಬಿದವನಾದೆ.</verse>
				<verse number="18">ನನಗೇಕೆ ನಿರಂತರವಾದ ವೇದನೆ? ಗುಣವಾಗದ ಗಡಸು ಗಾಯ? ನೀರು ಇರುವುದಾಗಿ ತೋರಿಸಿಕೊಳ್ಳುವ ಕಳ್ಳ ತೊರೆಯಾಗಬೇಕೆ ನೀವು ನನಗೆ?”</verse>
				<verse number="19">ಅದಕ್ಕೆ ಸರ್ವೇಶ್ವರ: “ನೀನು ನನಗೆ ಅಭಿಮುಖನಾಗಿ ಹಿಂದಿರುಗಿ ಬಂದರೆ ಮರಳಿ ನಿನ್ನನ್ನು ನನ್ನ ಸೇವೆಗೆ ಸೇರಿಸಿಕೊಳ್ಳುವೆನು. ತುಚ್ಛವಾದುದನ್ನು ತೊರೆದು ಅಮೂಲ್ಯವಾದುದನ್ನು ಉಚ್ಚರಿಸುವೆಯಾದರೆ ನೀನು ನನ್ನ ಬಾಯಂತಿರುವೆ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು. ನೀನು ಅವರ ಕಡೆಗೆ ತಿರುಗದಿರುವೆ.</verse>
				<verse number="20">ನಾನು ನಿನ್ನನ್ನು ಆ ಜನರಿಗೆ ದುರ್ಗಮವಾದ ಕಂಚಿನ ಪೌಳಿಗೋಡೆಯನ್ನಾಗಿಸುವೆನು. ನಿನಗೆ ವಿರುದ್ಧ ಅವರು ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗದು. ನಿನ್ನ ನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು.</verse>
				<verse number="21">ಇದು ಸರ್ವೇಶ್ವರನಾದ ನನ್ನ ಮಾತು. ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು, ಕ್ರೂರಿಗಳ ಕೈಯಿಂದ ರಕ್ಷಿಸುವೆನು.”</verse>
			</chapter>
			<chapter number="16">
				<verse number="1">ಸರ್ವೇಶ್ವರ ಸ್ವಾಮಿ ನನಗೆ ಈ ಸಂದೇಶವನ್ನು ದಯಪಾಲಿಸಿದರು:</verse>
				<verse number="2">“ನೀನು ಮದುವೆಯಾಗಬೇಡ, ಗಂಡು ಅಥವಾ ಹೆಣ್ಣು ಮಕ್ಕಳು ನಿನಗೆ ಈ ಸ್ಥಳದಲ್ಲಿ ಹುಟ್ಟದಿರಲಿ.</verse>
				<verse number="3">ಏಕೆಂದರೆ ಇಲ್ಲಿ ಆ ಗಂಡುಹೆಣ್ಣು ಮಕ್ಕಳಿಗೆ, ಅವರನ್ನು ಹೆತ್ತ ತಾಯಿಯರಿಗೆ, ಅವರನ್ನು ಈ ನಾಡಿನಲ್ಲಿ ಪಡೆದ ತಂದೆಯರಿಗೆ ಸಂಭವಿಸಲು ಇರುವುದನ್ನು ಸರ್ವೇಶ್ವರನಾದ ನಾನು ಹೇಳುತ್ತೇನೆ, ಕೇಳು:</verse>
				<verse number="4">ಅವರು ಘೋರ ಮರಣಕ್ಕೆ ಗುರಿಯಾಗುವರು. ಅವರಿಗಾಗಿ ಯಾರೂ ದುಃಖಿಸುವುದಿಲ್ಲ. ಅವರನ್ನು ಯಾರೂ ಹೂಣುವುದಿಲ್ಲ. ಅವರು ಗೊಬ್ಬರವಾಗಿ ಭೂಮಿಯ ಮೇಲೆ ಬಿದ್ದಿರುವರು. ಖಡ್ಗದಿಂದ ಹಾಗು ಕ್ಷಾಮದಿಂದ ಅವರು ನಾಶವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಜಂತುಗಳಿಗೂ ಆಹಾರವಾಗುವುವು.”</verse>
				<verse number="5">ಸರ್ವೇಶ್ವರ ಮತ್ತೆ ನನಗೆ ಹೀಗೆಂದರು: “ನೀನು ಸಾವು ಜರುಗಿದ ಮನೆಗಳಿಗೆ ಹೋಗಬೇಡ. ಅಲ್ಲಿ ನಡೆಯುವ ಗೋಳಾಟದಲ್ಲಿ ಸೇರಬೇಡ. ಎದೆಬಡಿದುಕೊಂಡು ಸಂತಾಪ ಸೂಚಿಸಬೇಕಾಗಿಲ್ಲ. ಏಕೆಂದರೆ, ನಾನು ದಯಪಾಲಿಸಿದ ಶಾಂತಿಯನ್ನೂ ಪ್ರೀತಿಯನ್ನೂ ಕೃಪೆಯನ್ನೂ ಆ ಜನರಿಂದ ತೆಗೆದುಬಿಟ್ಟಿದ್ದೇನೆ.</verse>
				<verse number="6">ಈ ನಾಡಿನಲ್ಲಿ ದೊಡ್ಡವರು ಹಾಗುಚಿಕ್ಕವರು ಸಾಯುವರು. ಅವರನ್ನು ಯಾರು ಹೂಣಿಡುವುದಿಲ್ಲ. ಅವರಿಗಾಗಿ ಯಾರೂ ಗೋಳಾಡುವುದಿಲ್ಲ. ದೇಹವನ್ನು ಹುಣ್ಣಾಗಿಸಿಕೊಳ್ಳುವುದಿಲ್ಲ. ತಲೆ ಬೋಳಿಸಿಕೊಳ್ಳುವುದಿಲ್ಲ.</verse>
				<verse number="7">ಸತ್ತವನಿಗಾಗಿ ದುಃಖಪಡುವವರನ್ನು ಸಂತೈಸುವುದಕ್ಕೋಸ್ಕರ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ, ತಾಯಿಯನ್ನಾಗಲಿ ಕಳೆದುಕೊಂಡವರಿಗು ಕೂಡ ಯಾರೂ ಸಾಂತ್ವನದ ಪಾನಪಾತ್ರೆಯನ್ನು ನೀಡುವುದಿಲ್ಲ.</verse>
				<verse number="8">“ಔತಣದ ಮನೆಗೂ ಹೋಗಬೇಡ. ಅಲ್ಲಿಯವರೊಡನೆ ಕುಳಿತು, ತಿಂದು, ಕುಡಿಯಬೇಡ,</verse>
				<verse number="9">ಏಕೆಂದರೆ ಇಸ್ರಯೇಲಿನ ದೇವರೂ ಸರ್ವಶಕ್ತ ಸರ್ವೇಶ್ವರನೂ ಆದ ನಾನು ಹೇಳುತ್ತೇನೆ, ಕೇಳು: ನಿಮ್ಮ ಕಾಲದಲ್ಲೆ, ನಿಮ್ಮ ಕಣ್ಣೆದುರಿಗೆ, ಸಂತೋಷ ಸಂಭ್ರಮದ ಧ್ವನಿಯನ್ನು ನಿಲ್ಲಿಸಿಬಿಡುವೆನು. ವಧೂವರರ ಸದ್ದೂ ಇಲ್ಲವಾಗುವುದು.</verse>
				<verse number="10">“ಇದನ್ನೆಲ್ಲ ನೀನು ಆ ಜನರಿಗೆ ತಿಳಿಸುವಾಗ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಸರ್ವೇಶ್ವರ ವಿಧಿಸಿದ್ದೇಕೆ? ನಾವು ಮಾಡಿದ ಅಪರಾಧವಾದರೂ ಏನು? ನಮ್ಮ ದೇವರಾದ ಸರ್ವೇಶ್ವರನಿಗೆ ವಿರುದ್ಧ ನಾವು ಕಟ್ಟಿಕೊಂಡ ಪಾಪವೇನು?’ ಎಂದು ಕೇಳುವರು.</verse>
				<verse number="11">ಆಗ ನೀನು ಅವರಿಗೆ ಹೀಗೆಂದು ಹೇಳಬೇಕು: ಸರ್ವೇಶ್ವರನ ಈ ಮಾತಿಗೆ ಕಿವಿಗೊಡಿ: ‘ನಿಮ್ಮ ಪೂರ್ವಜರು ನನ್ನನ್ನು ತೊರೆದುಬಿಟ್ಟರು. ಅನ್ಯದೇವತೆಗಳನ್ನು ಹಿಂಬಾಲಿಸಿದರು. ಅವುಗಳಿಗೆ ಸೇವೆಸಲ್ಲಿಸಿ ಪೂಜಿಸಿದರು. ನನ್ನನ್ನು ಬಿಟ್ಟುದಲ್ಲದೆ ನನ್ನ ಧರ್ಮವಿಧಿಗಳನ್ನು ಮೀರಿದರು.</verse>
				<verse number="12">ನೀವಾದರೊ ನಿಮ್ಮ ಪೂರ್ವಜರಿಗಿಂತ ಹೆಚ್ಚು ಕೇಡನ್ನು ಮಾಡಿದ್ದೀರಿ. ನೀವೆಲ್ಲರು ನನ್ನ ಮಾತನ್ನು ಕೇಳದೆ ದುಷ್ಟ ಹೃದಯವುಳ್ಳ ಹಟಮಾರಿಗಳಂತೆ ನಡೆಯುತ್ತಾ ಬಂದಿದ್ದೀರಿ.</verse>
				<verse number="13">ಈ ಕಾರಣಗಳ ನಿಮಿತ್ತ ನೀವಾಗಲಿ ನಿಮ್ಮ ಪೂರ್ವಜರಾಗಲಿ ನೋಡದ ನಾಡಿಗೆ ನಿಮ್ಮನ್ನು ಇಲ್ಲಿಂದ ಎಸೆದುಬಿಡುವೆನು. ಅಲ್ಲಿ ಹಗಲಿರುಳೂ ಅನ್ಯದೇವತೆಗಳಿಗೆ ಸೇವೆಮಾಡುವಿರಿ, ನನ್ನ ದಯೆ ದಾಕ್ಷಿಣ್ಯ ಮಾತ್ರ ನಿಮಗೆ ದೊರಕದು\.</verse>
				<verse number="14">ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ಕೇಳು, ಕಾಲಬರಲಿದೆ. ಆಗ ಜನರು, ‘ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬಿಡಿಸಿ ಬರಮಾಡಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವುದನ್ನು ಬಿಟ್ಟುಬಿಡುವರು.</verse>
				<verse number="15">ಬದಲಿಗೆ, ‘ಇಸ್ರಯೇಲರನ್ನು ಉತ್ತರ ದೇಶದಿಂದ ಹಾಗು ಅವರನ್ನು ತಾನು ತಳ್ಳಿಬಿಟ್ಟಿದ್ದ ಎಲ್ಲ ಸೀಮೆಗಳಿಂದ ಬಿಡಿಸಿ ಬರಮಾಡಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವರು. ನಾನು ಅವರ ಪೂರ್ವಜರಿಗೆ ದಯಪಾಲಿಸಿದ ನಾಡಿಗೆ ಅವರನ್ನು ಮರಳಿ ಬರಮಾಡುವೆನು.</verse>
				<verse number="16">ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ, ನಾನು ಬಹುಮಂದಿ ಬೆಸ್ತರನ್ನು ಕಳಿಸುವೆನು, ಅವರು ನನ್ನ ಜನರನ್ನು ಹಿಡಿಯುವರು, ಬಳಿಕ ಬಹುಜನ ಬೇಡರನ್ನು ಕಳಿಸುವೆನು. ಅವರು ಎಲ್ಲ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ನನ್ನ ಜನರನ್ನು ಹೊರಡಿಸಿ ಬೇಟೆಯಾಡುವರು.</verse>
				<verse number="17">ಈ ಜನರ ನಡತೆ ನನ್ನ ಮುಖಕ್ಕೆ ಮರೆಯಾಗಿಲ್ಲ, ಎಲ್ಲವು ನನ್ನ ಕಣ್ಣಿಗೆ ಕಟ್ಟಿದಂತಿದೆ. ಅವರ ಅಕ್ರಮ ನನಗೆ ಗುಟ್ಟೇನೂ ಅಲ್ಲ, ಎಲ್ಲವು ಬಟ್ಟಬಯಲಾಗಿದೆ.</verse>
				<verse number="18">ಮೊತ್ತ ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಇಮ್ಮಡಿ ಶಿಕ್ಷೆಯನ್ನು ಕೊಡುವೆನು. ಏಕೆಂದರೆ ಹೆಣಗಳಂತಿರುವ ತಮ್ಮ ಹೇಯ ವಿಗ್ರಹಗಳಿಂದ ನನ್ನ ನಾಡನ್ನು ಹೊಲಸುಮಾಡಿದ್ದಾರೆ. ಅಸಹ್ಯವಾದ ವಸ್ತುಗಳಿಂದ ಆ ನನ್ನ ಸ್ವಂತ ನಾಡನ್ನು ತುಂಬಿಸಿಬಿಟ್ಟಿದ್ದಾರೆ.”</verse>
				<verse number="19">“ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು.</verse>
				<verse number="20">ಮನುಷ್ಯ ಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೆ? ಕಲ್ಪಿಸಿಕೊಂಡರೆ ಅವು ದೇವರುಗಳೇ ಅಲ್ಲ,’ ಎಂದು ನಿವೇದಿಸುವುವು.”</verse>
				<verse number="21">ಸರ್ವೇಶ್ವರ: “ಆದುದರಿಂದ ಇಗೋ, ಇಂದೊಮ್ಮೆ ನನ್ನ ಭುಜಬಲವನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಯಪಡಿಸುವೆನು. ಚೆನ್ನಾಗಿ ಗ್ರಹಿಸುವಂತೆ ಮಾಡುವೆನು. ನನ್ನ ನಾಮಧೇಯ ಸರ್ವೇಶ್ವರ ಎಂದೇ ಅವರು ಗುರುತು ಹಚ್ಚುವರು.”</verse>
			</chapter>
			<chapter number="17">
				<verse number="1">ಸರ್ವೇಶ್ವರ ಸ್ವಾಮಿ ಜುದೇಯದ ಜನರಿಗೆ ಹೀಗೆನ್ನುತ್ತಾರೆ: “ಜುದೇಯದ ಪಾಪವನ್ನು ಕಬ್ಬಿಣದ ಲೇಖನಿಯಿಂದ, ವಜ್ರದ ಮೊನೆಯಿಂದ ಬರೆಯಲಾಗಿದೆ. ಅದನ್ನು ನಿಮ್ಮ ಜನರ ಹೃದಯದ ಹಲಗೆಯ ಮೇಲೂ ಅವರ ಬಲಿಪೀಠಗಳ ಕೊಂಬುಗಳ ಮೇಲೂ ಕೆತ್ತಲಾಗಿದೆ.</verse>
				<verse number="2">ನಿಮ್ಮ ಮಕ್ಕಳು ಸೊಂಪಾಗಿ ಬೆಳೆದ ಮರಗಳನ್ನಾಗಲಿ ಎತ್ತರವಾದ ಗುಡ್ಡಗಳನ್ನಾಗಲಿ, ಬೈಲಿನ ಬೆಟ್ಟಗಳನ್ನಾಗಲಿ ಕಂಡಾಗಲೆಲ್ಲ ಅವರ ಬಲಿಪೀಠಗಳನ್ನು ಹಾಗು ಅಶೇರ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುತ್ತಾರೆ.</verse>
				<verse number="3">ನಿಮ್ಮ ಪ್ರಾಂತ್ಯಗಳಲ್ಲೆಲ್ಲ ನೀವು ಮಾಡಿದ ಪಾಪದ ನಿಮಿತ್ತ ನಾನು ನಿಮ್ಮ ಎಲ್ಲ ಸೊತ್ತುಸಂಪತ್ತುಗಳನ್ನು ಮತ್ತು ಪೂಜಾಸ್ಥಳಗಳನ್ನು ಸೂರೆಗೆ ಈಡುಮಾಡುವೆನು.</verse>
				<verse number="4">ನಾನು ನಿಮಗೆ ಹಕ್ಕು ಬಾಧ್ಯತೆಯಾಗಿ ದಯಪಾಲಿಸಿದ ಸೊತ್ತನ್ನು ನೀವು ದೋಷದಿಂದಲೆ ಕಳೆದುಕೊಳ್ಳುವಿರಿ. ನೀವು ನೋಡದ ನಾಡಿನಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೇ ಊಳಿಗದವರನ್ನಾಗಿ ಮಾಡುವೆನು. ನೀವು ನನ್ನ ಕೋಪಾಗ್ನಿಯನ್ನು ಹೊತ್ತಿಸಿದ್ದೀರಿ. ಅದು ನಿರಂತರವಾಗಿ ಉರಿಯುತ್ತಿರುವುದು.</verse>
				<verse number="5">ಇವು ಸರ್ವೇಶ್ವರನ ಮಾತುಗಳು: “ಮಾನವ ಮಾತ್ರದವರಲ್ಲಿ ಭರವಸೆಯಿಟ್ಟು ನರಜನ್ಮದವರನ್ನೇ ತನ್ನ ಭುಜಬಲವೆಂದುಕೊಂಡು ಸರ್ವೇಶ್ವರನನ್ನೇ ತೊರೆಯುವಂಥ ಹೃದಯವುಳ್ಳವನು ಶಾಪಗ್ರಸ್ತನು!</verse>
				<verse number="6">ಇಂಥವನು ಅಡವಿಯಲ್ಲಿನ ಜಾಲಿಗಿಡಕ್ಕೆ ಸಮಾನನು. ಶುಭಸಂಭವಿಸಿದರೂ ಅದು ಅವನ ಕಣ್ಣಿಗೆ ಕಾಣದು. ಜನರಾರೂ ವಾಸಿಸದ ಚೌಳು ನೆಲದೊಳು ಬೆಳೆಯಿಲ್ಲದ ಬೆಂಗಾಡಿನೊಳು ವಾಸಿಸುವವನ ಪರಿಸ್ಥಿತಿ ಅವನದು.</verse>
				<verse number="7">ಸರ್ವೇಶ್ವರನಲ್ಲಿ ಭರವಸೆಯಿಟ್ಟವನಾದರೋ ಧನ್ಯ! ಅಂಥವನಿಗೆ ಸರ್ವೇಶ್ವರನಲ್ಲೇ ವಿಶ್ವಾಸ.</verse>
				<verse number="8">ನೀರರುಗಿನಲೆ ನೆಡಲಾದ, ನದಿಯ ಬದಿಯಲೆ ಬೇರು ಹರಡಿದ ಬಿಸಿಲ ಧಗೆಗೆ ಹೆದರದ, ಬರಗಾಲದಲ್ಲೂ ನಿಶ್ಚಿಂತವಾದ ಹಸಿರೆಲೆಬಿಡುವ, ಫಲನೀಡುವ ಮರಕ್ಕೆ ಸಮಾನನು ಆತ.</verse>
				<verse number="9">ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.</verse>
				<verse number="10">ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.</verse>
				<verse number="11">ಅನ್ಯಾಯವಾಗಿ ಆಸ್ತಿಪಾಸ್ತಿಗಳನ್ನು ಗಳಿಸಿಕೊಳ್ಳುವ ಮಾನವ ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನ. ಅವು ಅವನಿಂದ ತೊಲಗಿಹೋಗುವುವು ನಡುಪ್ರಾಯದಲ್ಲಿ ಅವನು ಮೂರ್ಖನಾಗಿ ಕಂಡುಬರುವನು ಅಂತ್ಯಕಾಲದಲ್ಲಿ.”</verse>
				<verse number="12">ಆದಿಯಿಂದಲೂ ಉನ್ನತಸ್ಥಾನದಲ್ಲಿದೆ ನಮ್ಮ ಪವಿತ್ರಾಲಯ ಅದು ಮಹಿಮೆಯ ಸಿಂಹಾಸನ.</verse>
				<verse number="13">ಸ್ವಾಮಿ ಸರ್ವೇಶ್ವರಾ, ನೀವು ಇಸ್ರಯೇಲರ ಆಶ್ರಯ! ನಿಮ್ಮನ್ನು ಬಿಟ್ಟುಹೋಗುವವರು ಆಶಾಭಂಗಪಡುವರು ಅವರು ಜೀವಜಲದ ಬುಗ್ಗೆಯನ್ನೆ ತೊರೆದವರು ತಮ್ಮ ಹೆಸರನ್ನು ಧೂಳಿನಲ್ಲಿ ಬರೆಸಿಕೊಂಡವರು.</verse>
				<verse number="14">ಹೇ ಸರ್ವೇಶ್ವರಾ, ನನ್ನನ್ನು ಸ್ವಸ್ಥಪಡಿಸಿರಿ, ನಾನು ಸ್ವಸ್ಥನಾಗುವೆನು. ನನ್ನನ್ನು ರಕ್ಷಿಸಿರಿ, ನಾನು ರಕ್ಷಿತನಾಗಿಯೆ ತೀರುವೆನು. ನೀವೇ ನನಗೆ ಸ್ತುತ್ಯಾರ್ಹರು!</verse>
				<verse number="15">ಅಕಟಾ, ಜನರು ನನ್ನನ್ನು ‘ಸರ್ವೇಶ್ವರನ ಮಾತೆಲ್ಲಿ? ಅದು ಈಗಲೇ ನೆರವೇರಲಿ’ ಎಂದು ಮೂದಲಿಸುತ್ತಾರೆ.</verse>
				<verse number="16">ನಾನಾದರೋ ‘ಕೇಡನ್ನು ಬರಮಾಡಿ’ ಎಂದು ನಿಮ್ಮನ್ನು ತವಕಪಡಿಸಲಿಲ್ಲ. ಅನಿವಾರ್ಯ ವಿಪತ್ತಿನ ದಿನವನ್ನು ನಾನು ಅಪೇಕ್ಷಿಸಲಿಲ್ಲ. ಇದು ನಿಮಗೆ ತಿಳಿದ ವಿಷಯ. ನನ್ನ ಮಾತುಗಳು ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯಿಂದ ಹೊರಟವು.</verse>
				<verse number="17">ನನಗೆ ಭಯಕ್ಕೆ ಕಾರಣವಾಗಬೇಡಿ, ಕೇಡಿನ ಕಾಲದಲ್ಲಿ ನನಗೆ ಆಶ್ರಯ ನೀಡಿ.</verse>
				<verse number="18">ನನಗಲ್ಲ, ನನ್ನ ಹಿಂಸಕರಿಗೆ ಅವಮಾನವಾಗಲಿ. ಭಯಭ್ರಾಂತಿ ನನ್ನನ್ನಲ್ಲ, ಅವರನ್ನು ಅಪಹರಿಸಲಿ. ಅವರಿಗೆ ಕೇಡುಗಾಲವನ್ನು ಬರಮಾಡಿ ಬೇರುಸಹಿತ ಅವರನ್ನು ನಾಶಪಡಿಸಿರಿ!</verse>
				<verse number="19">ಸರ್ವೇಶ್ವರ ನನಗೆ ಕೊಟ್ಟ ಆದೇಶ: “ನೀನು ಹೊರಟು ಜುದೇಯದ ಅರಸರು ಹೋಗಿಬರುವ ಜನತಾದ್ವಾರದಲ್ಲೂ ಜೆರುಸಲೇಮಿನ ಇತರ ಬಾಗಿಲುಗಳಲ್ಲೂ ನಿಂತುಕೊಂಡು ಹೀಗೆಂದು ಸಾರು:</verse>
				<verse number="20">‘ಈ ಬಾಗಿಲುಗಳಲ್ಲಿ ಸೇರುವ ಜುದೇಯದ ಅರಸರೇ, ಎಲ್ಲ ಯೆಹೂದ್ಯರೇ, ಜೆರುಸಲೇಮಿನ ಸಕಲ ನಿವಾಸಿಗಳೇ, ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಕೇಳಿರಿ.</verse>
				<verse number="21">ಮನಮುಟ್ಟಿ ಇದನ್ನು ಗಮನಿಸಿರಿ: ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿ. ಜೆರುಸಲೇಮಿನ ಬಾಗಿಲುಗಳಲ್ಲಿ ಅದನ್ನು ತರಲೇಬೇಡಿ.</verse>
				<verse number="22">ಆ ಸಬ್ಬತ್ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿ. ಯಾವ ಕೆಲಸವನ್ನೂ ಮಾಡದಿರಿ. ನಾನು ನಿಮ್ಮ ಪೂರ್ವಜರಿಗೆ ಆಜ್ಞೆಮಾಡಿದಂತೆ ಸಬ್ಬತ್ ದಿನವನ್ನು ಪವಿತ್ರ ದಿನವನ್ನಾಗಿ ಆಚರಿಸಿರಿ.</verse>
				<verse number="23">ಅವರಾದರೋ ನನಗೆ ಕಿವಿಗೊಡಲಿಲ್ಲ. ಕೇಳಲಿಕ್ಕೂ ಕಲಿತುಕೊಳ್ಳಲಿಕ್ಕೂ ಅವರು ಒಪ್ಪಲಿಲ್ಲ.</verse>
				<verse number="24">“ಸರ್ವೇಶ್ವರನಾದ ನಾನು ಹೇಳುವ ಮಾತಿದು: ನೀವು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನು ತರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ಪವಿತ್ರವಾಗಿ ಆಚರಿಸಿದರೆ,</verse>
				<verse number="25">ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ ಹಾಗು ಪ್ರಭುಗಳೂ ರಥಾಶ್ವಗಳನ್ನು ಏರಿದವರಾಗಿ ಈ ನಗರದ ಬಾಗಿಲುಗಳನ್ನು ಪ್ರವೇಶಿಸುವರು. ಇವರು ಮಾತ್ರವಲ್ಲ, ಇವರ ಪ್ರಧಾನರು, ಜುದೇಯದ ಜನರು, ಜೆರುಸಲೇಮಿನ ನಿವಾಸಿಗಳು ಎಲ್ಲರೂ ಇಲ್ಲಿ ಸೇರುವರು. ಈ ನಗರದಲ್ಲಿ ಜನರು ಯಾವಾಗಲು ತುಂಬಿರುವರು.</verse>
				<verse number="26">ಜುದೇಯದ ನಗರಗಳು, ಜೆರುಸಲೇಮಿನ ಸುತ್ತಮುತ್ತಲಿನ ಪ್ರದೇಶಗಳು, ಬೆನ್ಯಾಮಿನ್ ಪ್ರಾಂತ್ಯ, ಇಳಕಲಿನ ಪ್ರದೇಶ, ಬೆಟ್ಟದ ಮೇಲಣ ಪ್ರದೇಶ, ದಕ್ಷಿಣ ಪ್ರಾಂತ್ಯ, ಈ ಎಲ್ಲ ಸ್ಥಳಗಳಿಂದ ಸರ್ವಾಂಗಹೋಮಪಶು, ಯಜ್ಞಪಶು, ಧಾನ್ಯನೈವೇದ್ಯ, ಧೂಪ ಮತ್ತು ಕೃತಜ್ಞತಾರ್ಪಣೆ ಇವುಗಳನ್ನು ಜನರು ನನ್ನ ಆಲಯಕ್ಕೆ ತೆಗೆದುಕೊಂಡು ಬರುವರು.</verse>
				<verse number="27">ಆದರೆ ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಹೊತ್ತು, ಜೆರುಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಗೊಳ್ಳದೆ, ಆ ಸಬ್ಬತ್ ದಿನವನ್ನು ಪವಿತ್ರ ದಿನ ಎಂದು ಆಚರಿಸದೆಹೋದರೆ, ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು. ಅದು ಜೆರುಸಲೇಮಿನ ಅರಮನೆಗಳನ್ನು ದಹಿಸಿಬಿಡುವುದು, ಆ ಬೆಂಕಿ ಆರುವುದೇ ಇಲ್ಲ.”</verse>
			</chapter>
			<chapter number="18">
				<verse number="1">ಸರ್ವೇಶ್ವರ ಸ್ವಾಮಿ ನನಗೆ:</verse>
				<verse number="2">“ನೀನೆದ್ದು ಕುಂಬಾರನ ಮನೆಗೆ ಇಳಿದುಹೋಗು, ಅಲ್ಲೇ ನನ್ನ ನುಡಿಯನ್ನು ನಿನಗೆ ಕೇಳಮಾಡುತ್ತೇನೆ,” ಎಂದು ತಿಳಿಸಿದರು.</verse>
				<verse number="3">ಅಂತೆಯೇ ನಾನು ಕುಂಬಾರನ ಮನೆಗೆ ಹೋದೆ. ಅಲ್ಲಿ ಆ ಕುಂಬಾರನು ತಿರುಗುತ್ತಿದ್ದ ಚಕ್ರದ ಮೇಲೆ ಕೆಲಸ ಮಾಡುತ್ತಿದ್ದ.</verse>
				<verse number="4">ಅವನು ಜೇಡಿ ಮಣ್ಣಿನಿಂದ ಮಾಡುತ್ತಿದ್ದ ಒಂದು ಪಾತ್ರೆ ಕೆಟ್ಟುಹೋಗುತ್ತಿದ್ದಾಗಲೆಲ್ಲ ಅದನ್ನು ಮತ್ತೆ ತನಗೆ ಸರಿತೋಚಿದ ಹಾಗೆ ಹೊಸ ಪಾತ್ರೆಯನ್ನಾಗಿ ಮಾಡುತ್ತಿದ್ದ.</verse>
				<verse number="5">ಆಗ ಸರ್ವೇಶ್ವರ ನನಗೆ ಅನುಗ್ರಹಿಸಿದ ಸಂದೇಶ:</verse>
				<verse number="6">“ಇಸ್ರಯೇಲಿನ ವಂಶಜರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಕೂಡದೇ? ಇಸ್ರಯೇಲಿನ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ ಹಾಗೆಯೇ ನೀವು ನನ್ನ ಕೈಯಲ್ಲಿ ಇದ್ದೀರಿ.</verse>
				<verse number="7">ಒಂದು ಜನಾಂಗವನ್ನು ಅಥವಾ ಒಂದು ರಾಜ್ಯವನ್ನು ಕಿತ್ತು, ಕೆಡವಿ, ನಾಶಪಡಿಸಿ ಎಂದು ನಾನು ಎಂದಾದರೂ ಅಪ್ಪಣೆ ಕೊಡಲು ಸಾಧ್ಯ.</verse>
				<verse number="8">ದಂಡನೆಗೆ ನಿರ್ಣಯಿಸಲಾದ ಆ ಜನಾಂಗದವರು ತಮ್ಮ ಕೆಟ್ಟತನವನ್ನು ಬಿಟ್ಟು ಹಿಂತಿರುಗಿದ್ದೇ ಆದರೆ ನಾನು ಬರಮಾಡಬೇಕೆಂದಿದ್ದ ಆ ವಿಪತ್ತನ್ನು ನಾನು ಮನಮರುಗಿ ಬರಮಾಡದಿರುವೆನು.</verse>
				<verse number="9">ಹಾಗೆಯೇ ಒಂದು ಜನಾಂಗವನ್ನು ಅಥವಾ ಒಂದು ರಾಜ್ಯವನ್ನು ನೆಟ್ಟು ಕಟ್ಟಬೇಕೆಂದು ನಾನು ಎಂದಾದರೂ ಅಪ್ಪಣೆಕೊಡಲು ಸಾಧ್ಯ.</verse>
				<verse number="10">ಅದು ನನ್ನ ಮಾತನ್ನು ಕೇಳದೆ ನನ್ನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ್ದೇ ಆದರೆ ನಾನು ಮನಸ್ಸನ್ನು ಬದಲಾಯಿಸುವೆನು. ಅದಕ್ಕೆ ಮಾಡಬೇಕೆಂದಿದ್ದ ಒಳಿತನ್ನು ಮಾಡದಿರುವೆನು.</verse>
				<verse number="11">ಈಗ ನೀನು ಜುದೇಯದ ಹಾಗು ಜೆರುಸಲೇಮಿನ ಜನರಿಗೆ ಈ ಸಂದೇಶವನ್ನು ತಿಳಿಸು - ‘ಸರ್ವೇಶ್ವರ ಹೀಗೆನ್ನುತ್ತಾರೆ: ನಾನು ನಿಮಗೆ ವಿರುದ್ಧ ವಿಪತ್ತನ್ನು ಕಲ್ಪಿಸುತ್ತಿದ್ದೇನೆ. ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ದುರ್ಮಾರ್ಗವನ್ನು ಬಿಟ್ಟು ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ.</verse>
				<verse number="12">“ಆದರೆ ಅವರು, ‘ಇದೆಲ್ಲ ಹೇಳಿ ಏನು ಪ್ರಯೋಜನವಿಲ್ಲ; ನಾವು ನಮ್ಮ ಆಲೋಚನೆ ಪ್ರಕಾರ ನಡೆಯುತ್ತೇವೆ. ನಮ್ಮಲ್ಲಿ ಪ್ರತಿಯೊಬ್ಬರು ನಮ್ಮ ನಮ್ಮ ಹೃದಯದ ಚಟದಂತೆಯೇ ನಡೆಯುತ್ತೇವೆ’ ಎಂದು ಹೇಳುವರು.”</verse>
				<verse number="13">ಸರ್ವೇಶ್ವರ ಇಂತೆಂದರು: “ಇಂಥ ಸುದ್ದಿಯನ್ನು ಯಾರು ಕೇಳಿದ್ದಾರೆಂದು ಅನ್ಯಜನಾಂಗಗಳಲ್ಲೆ ವಿಚಾರಿಸಿರಿ. ಇಸ್ರಯೇಲೆಂಬ ಯುವತಿ ಕೇವಲ ಅಸಹ್ಯಕಾರ್ಯವನ್ನೆ ಎಸಗಿದ್ದಾಳೆ.</verse>
				<verse number="14">ಲೆಬನೋನಿನ ಹಿಮವು ಅರಣ್ಯದಾ ಶಿಖರದಿಂದ ತಪ್ಪುವುದುಂಟೆ? ಅಲ್ಲಿಂದ ಇಳಿದು ಹರಿಯುವ ತೊರೆಯ ನೀರು ಬತ್ತುವುದುಂಟೆ?</verse>
				<verse number="15">ನನ್ನ ಜನರಾದರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಾರತಿ ಎತ್ತಿದ್ದುಂಟು. ಸನಾತನ ಸನ್ಮಾರ್ಗಗಳಲ್ಲಿ ಮುಗ್ಗರಿಸಿ ಸರಿಯಲ್ಲದ ಸೀಳುದಾರಿಯಲ್ಲಿ ಅಲೆದದ್ದುಂಟು.</verse>
				<verse number="16">ಆದ್ದರಿಂದ ನಾಡನ್ನು ಭಯಾನಕವಾಗಿಸುವರು ಹಾದು ಹೋಗುವವರೆಲ್ಲ ಬೆಬ್ಬೆರಗಾಗಿ ತಲೆದೂಗುವರು, ಸಿಳ್ಳು ಹಾಕಿ ಅದನ್ನು ಪರಿಹಾಸ್ಯ ಮಾಡುವರು.</verse>
				<verse number="17">ಶತ್ರುಗಳು ಮೇಲೆ ಬಿದ್ದು ದಾಳಿಮಾಡಲು ಬಂದಾಗ ಮೂಡಣ ಬಿರುಗಾಳಿ ಮುಂದೆ ಧೂಳಿ ಮಣ್ಣಿನಂತೆ ನನ್ನ ಜನರನ್ನು ದಿಕ್ಕುಪಾಲಾಗಿ ಚದರಿಸುವೆನು. ಅವರ ಆ ವಿಪತ್ತಿನ ದಿನದಂದು ಅವರತ್ತ ಮುಖತಿರುಗಿಸದೆ ಬೆನ್ನು ಮಾಡುವೆನು.”</verse>
				<verse number="18">ಆಗ ಜನರು, “ಬನ್ನಿ, ಈ ಯೆರೆಮೀಯನ ವಿರುದ್ಧ ಒಳಸಂಚುಮಾಡೋಣ. ಧರ್ಮೋಪದೇಶಕ್ಕೆ ಯಾಜಕರಿದ್ದಾರೆ. ಮಂತ್ರಾಲೋಚನೆಗೆ ಜ್ಞಾನಿಗಳಿದ್ದಾರೆ. ದೈವೋಕ್ತಿಗೆ ಪ್ರವಾದಿಯ ಕೊರತೆ ಎಂದಿಗೂ ಇಲ್ಲ. ಬನ್ನಿ, ಇವನ ಬಾಯಿ ಬಡಿಯೋಣ. ಇವನ ಯಾವ ಮಾತಿಗೂ ನಾವು ಕಿವಿಗೊಡಬೇಕಾಗಿಲ್ಲ,” ಎಂದುಕೊಂಡರು.</verse>
				<verse number="19">ಯೆರೆಮೀಯ: “ಸರ್ವೇಶ್ವರಾ, ನನ್ನ ಕಡೆಗೆ ಕಿವಿಗೊಡಿ. ನನ್ನೊಡನೆ ವಾದಿಸುವವರ ಮಾತನ್ನು ಗಮನಿಸಿ ನೋಡಿ.</verse>
				<verse number="20">ಮಾಡಿದ ಮೇಲಿಗೆ ಕೇಡಿನ ಪ್ರತಿಫಲವೆ? ನನ್ನ ಪ್ರಾಣ ಹಿಡಿಯಲು ಗುಂಡಿಯನ್ನು ತೋಡಿದ್ದಾರೆ. ಅವರ ಮೇಲೆ ನಿಮಗಿದ್ದ ಕೋಪಾವೇಶವನ್ನು ಶಮನಗೊಳಿಸಲು ನಿಮ್ಮ ಮುಂದೆ ನಿಂತು ನಾನು ವಿನಂತಿಸಿದ್ದನ್ನು ನೆನಪಿಗೆ ತಂದುಕೊಳ್ಳಿ.</verse>
				<verse number="21">ಆದರೆ ಈಗ ಅವರ ಮಕ್ಕಳು ಕ್ಷಾಮಕ್ಕೆ ಗುರಿಯಾಗಲಿ. ಕತ್ತಿಗೆ ತುತ್ತಾಗಲಿ. ಅವರ ಮಡದಿಯರು ವಿಧವೆಯರಾಗಲಿ, ಮಕ್ಕಳನ್ನು ಕಳೆದುಕೊಳ್ಳಲಿ, ಅವರ ಗಂಡಂದಿರು ಸತ್ತುಬೀಳಲಿ. ಯುವಕರು ಕಾಳಗ-ಕತ್ತಿಗೆ ಬಲಿಯಾಗಲಿ.</verse>
				<verse number="22">ಕಳ್ಳಕಾಕರ ಗುಂಪು ಫಕ್ಕನೆ ಅವರ ಮೇಲೆ ಬೀಳಲಿ. ಅವರ ಮನೆಮಠಗಳಿಂದ ಕಿರಿಚಾಟ ಕೇಳಿಬರಲಿ. ಅವರು ನನ್ನನ್ನು ಕೆಡವಲು ಗುಂಡಿಯನ್ನು ತೋಡಿದ್ದಾರೆ. ನನ್ನ ಕಾಲುಗಳಿಗೆ ಉರುಲನ್ನು ಗುಟ್ಟಾಗಿ ಒಡ್ಡಿದ್ದಾರೆ.</verse>
				<verse number="23">ಸರ್ವೇಶ್ವರಾ, ನನ್ನನ್ನು ಕೊಲ್ಲಲು ಅವರು ಮಾಡಿಕೊಂಡಿರುವ ಸಂಚು ನಿಮಗೆ ತಿಳಿದಿದೆ. ಅವರ ಅಪರಾಧವನ್ನು ಕ್ಷಮಿಸಬೇಡಿ, ಅವರ ಪಾಪವನ್ನು ಅಳಿಸಬೇಡಿ, ಅದು ನಿಮ್ಮ ಕಣ್ಣೆದುರಿಗೇ ಇರಲಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪ ವ್ಯಕ್ತವಾಗುವಾಗ ಅವರಿಗೆ ತಕ್ಕುದನ್ನು ಮಾಡಿ.”</verse>
			</chapter>
			<chapter number="19">
				<verse number="1">ಸರ್ವೇಶ್ವರ ಸ್ವಾಮಿ ನನಗೆ ಹೀಗೆ ಹೇಳಿದರು: “ಹೋಗು, ಕುಂಬಾರ ಮಾಡಿದ ಮಣ್ಣಿನ ಮಡಕೆಯೊಂದನ್ನು ಕೊಂಡುಕೊ. ಜನರ ಹಿರಿಯರಲ್ಲೂ ಯಾಜಕರ ಹಿರಿಯರಲ್ಲೂ ಕೆಲವರನ್ನು ಕರೆದುಕೊಂಡು</verse>
				<verse number="2">ಬೋಕಿಯ ಬಾಗಿಲಿನ ಸಮೀಪದಲ್ಲಿರುವ ‘ಬೆನ್‍ಹಿನ್ನೋಮ್’ ಕಣಿವೆಗೆ ಹೋಗು. ನಾನು ನಿನಗೆ ತಿಳಿಸುವ ಈ ಸಂದೇಶವನ್ನು ಅಲ್ಲಿ ಸಾರು -</verse>
				<verse number="3">‘ಜುದೇಯದ ಅರಸರೇ, ಜೆರುಸಲೇಮಿನ ನಿವಾಸಿಗಳೇ, ಸರ್ವೇಶ್ವರನ ಸಂದೇಶವನ್ನು ಕೇಳಿರಿ. ಇದು ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ: ಈ ಸ್ಥಳದ ಮೇಲೆ ನಾನು ಕೇಡನ್ನು ಬರಮಾಡುವೆನು. ಅದರ ಸುದ್ದಿಯನ್ನು ಕೇಳುವವರ ಕಿವಿಗಳೂ ನಿಮಿರುವುವು.</verse>
				<verse number="4">ಈ ಜನರು ನನ್ನನ್ನು ತೊರೆದು ಬಿಟ್ಟು ತಮಗಾಗಲಿ, ತಮ್ಮ ಪೂರ್ವಜರಿಗಾಗಲಿ, ಜುದೇಯದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿದ್ದಾರೆ. ಈ ಸ್ಥಳವನ್ನು ಅಪವಿತ್ರಗೊಳಿಸಿದ್ದಾರೆ. ನಿರ್ದೋಷಿಗಳ ರಕ್ತದಿಂದ ತುಂಬಿಸಿದ್ದಾರೆ.</verse>
				<verse number="5">ತಮ್ಮ ಮಕ್ಕಳನ್ನು ಬಾಳ್‍ದೇವತೆಗೆ ಆಹುತಿಕೊಡಲು ಆ ದೇವತೆಗೆ ಬಲಿಪೀಠಗಳನ್ನು ಕೂಡ ಏರ್ಪಡಿಸಿದ್ದಾರೆ. ನಾನು ಇಂಥ ಆಚಾರಗಳನ್ನು ವಿಧಿಸಲಿಲ್ಲ. ಅದರ ಮಾತನ್ನೇ ಎತ್ತಲಿಲ್ಲ. ಅಂಥದ್ದು ನನ್ನ ಮನಸ್ಸಿಗೂ ತೋಚಿದ್ದಿಲ್ಲ.</verse>
				<verse number="6">ಆದಕಾರಣ ಈ ಸ್ಥಳಕ್ಕೆ ತೋಫೆತ್ ಮತ್ತು ಬೆನ್‍ಹಿನ್ನೋಮಿನ ಕಣಿವೆ ಎಂಬ ಹೆಸರುಗಳು ಹೋಗಿ, ‘ಕೊಲೆಯ ಕಣಿವೆ’ ಎಂದು ಹೆಸರಿಸಲಾಗುವ ಕಾಲ ಬರುವುದು.</verse>
				<verse number="7">ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಜೆರುಸಲೇಮಿನವರ ಯೋಜನೆಗಳನ್ನು ಮಣ್ಣುಪಾಲಾಗಿಸುವೆನು. ಅವರ ಶತ್ರುಗಳ ಹಾಗು ಕೊಲೆಗಡುಕರ ಕತ್ತಿಗೆ ಅವರನ್ನು ತುತ್ತಾಗಿಸುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗಿಸುವೆನು.</verse>
				<verse number="8">ಈ ನಗರವನ್ನು ಭಯಾನಕ ಹಾಗೂ ಹಾಸ್ಯಾಸ್ಪದ ಸ್ಥಳವನ್ನಾಗಿಸುವೆನು. ಹಾದುಹೋಗುವವರೆಲ್ಲರು ಅದಕ್ಕೆ ಒದಗಿದ ವಿಪತ್ತನ್ನು ಕಂಡು ನಿಬ್ಬೆರಗಾಗಿ ಹೀಗಳೆಯುವರು.</verse>
				<verse number="9">ಅವರ ಶತ್ರುಗಳು, ಕೊಲೆಗಡುಕರು ಅವರನ್ನು ಮುತ್ತಿ ನಸುಕುವಾಗ ಒಬ್ಬರು ಮತ್ತೊಬ್ಬರನ್ನು ತಿನ್ನುವುದು ಮಾತ್ರವಲ್ಲ, ತಮ್ಮ ಪುತ್ರಪುತ್ರಿಯರ ಮಾಂಸವನ್ನೇ ತಿನ್ನುವರು.’</verse>
				<verse number="10">“ಆಗ ನೀನು, ನಿನ್ನ ಸಂಗಡ ಬಂದವರ ಕಣ್ಣೆದುರಿಗೇ ಆ ಮಣ್ಣಿನ ಮಡಕೆಯನ್ನು ಒಡೆದುಬಿಟ್ಟು ಅವರಿಗೆ ಹೀಗೆಂದು ನುಡಿ:</verse>
				<verse number="11">ಸರ್ವಶಕ್ತ ಸರ್ವೇಶ್ವರನ ಸಂದೇಶವಿದು - ಕುಂಬಾರ ಮಾಡಿದ ಮಣ್ಣಿನ ಮಡಕೆಯನ್ನು ಒಡೆದುಹಾಕಿದ ಮೇಲೆ ಸರಿಪಡಿಸಲಾಗದು. ಅಂತೆಯೇ ನಾನು ಈ ಜನರನ್ನು ಹಾಗು ನಗರವನ್ನು ಒಡೆದುಹಾಕುವೆನು. ಹೂಣಲು ಇನ್ನೆಲ್ಲಿಯೂ ಸ್ಥಳವಿಲ್ಲವಾಗಿ ಹೆಣಗಳನ್ನು ಈ ತೋಫೆತಿನಲ್ಲೇ ಹೂಣುವರು.</verse>
				<verse number="12">ನಾನು ಈ ಸ್ಥಳವನ್ನೂ ಇದರ ನಿವಾಸಿಗಳನ್ನೂ ಅಷ್ಟರಮಟ್ಟಿಗೆ ನಾಶಪಡಿಸಿ ಈ ನಗರವನ್ನು ತೋಫೆತಿನ ಪರಿಸ್ಥಿತಿಗೆ ಇಳಿಸುವೆನು.</verse>
				<verse number="13">ಜೆರುಸಲೇಮಿನ ಮನೆಗಳೂ ಜುದೇಯದ ಅರಸರ ಮನೆಗಳೂ, ಅಂದರೆ ಯಾವ ಯಾವ ಮನೆಮಾಳಿಗೆಗಳ ಮೇಲೆ ಆಕಾಶದ ನಕ್ಷತ್ರಗಣಕ್ಕೆಲ್ಲ ಧೂಪಾರತಿ ಎತ್ತಿ ಅನ್ಯದೇವತೆಗಳಿಗೆ ಪಾನನೈವೇದ್ಯಗಳನ್ನು ಸುರಿದಿದ್ದಾರೋ ಆ ಮನೆಗಳೆಲ್ಲ ಹೊಲಸಾಗಿ ತೋಫೆತ್ ಸ್ಥಳಕ್ಕೆ ಸಮಾನವಾಗುವುವು.”</verse>
				<verse number="14">ಯೆರೆಮೀಯನು ಸರ್ವೇಶ್ವರ ಸ್ವಾಮಿಯ ಅಪ್ಪಣೆಯಂತೆ ತೋಫೆತಿನಲ್ಲಿ ಪ್ರವಾದಿಸಿದ ಬಳಿಕ ಅಲ್ಲಿಂದ ಬಂದು ಸರ್ವೇಶ್ವರನ ಆಲಯದ ಪ್ರಾಕಾರದಲ್ಲಿ ನಿಂತುಕೊಂಡು:</verse>
				<verse number="15">“ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ - ಈ ನಗರದವರೂ ಇದರ ಸುತ್ತಮುತ್ತಿನ ಊರಿನವರೂ ನನ್ನ ಮಾತನ್ನು ಕೇಳದೆಹೋದರು. ತಮ್ಮ ಮನಸ್ಸನ್ನು ಕಲ್ಲಾಗಿಸಿಕೊಂಡರು. ಆದುದರಿಂದ ನಾನು ಈ ನಗರಕ್ಕೆ ಶಾಪ ಹಾಕಿದ ಕೇಡನ್ನೆಲ್ಲಾ ಅವರಿಗೆ ಬರಮಾಡುವೆನು,” ಎಂದು ಎಲ್ಲ ಜನರಿಗೆ ಸಾರಿದನು.</verse>
			</chapter>
			<chapter number="20">
				<verse number="1">ಯೆರೆಮೀಯ ಈ ಪ್ರವಾದನೆ ಮಾಡುವುದನ್ನು ಇಮ್ಮೇರನ ಮಗ ಹಾಗು ಸರ್ವೇಶ್ವರನ ಆಲಯದ ಮುಖ್ಯಾಧಿಕಾರಿಯಾದ ಯಾಜಕ ಪಷ್ಹೂರನು ಕೇಳಿದನು.</verse>
				<verse number="2">ಅವನು ಪ್ರವಾದಿ ಯೆರೆಮೀಯನನ್ನು ಹೊಡೆಯಿಸಿ ಸರ್ವೇಶ್ವರನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲ ಬಳಿಯಲ್ಲಿದ್ದ ಸೆರೆಗೆ ಹಾಕಿಸಿದನು.</verse>
				<verse number="3">ಮರುದಿನ ಆ ಪಷ್ಹೂರನು ಯೆರೆಮೀಯನನ್ನು ಸೆರೆಯಿಂದ ಬಿಡಿಸಿದಾಗ ಯೆರೆಮೀಯ ಅವನಿಗೆ ಹೀಗೆಂದು ಹೇಳಿದನು: “ಸರ್ವೇಶ್ವರ ನಿನ್ನ ಹೆಸರನ್ನು ಪಷ್ಹೂರ್ ಎಂದು ಕರೆಯದೆ ‘ಮಾಗೋರ್ ಮಿಸ್ಸಾಬೀಬ್’ ಎಂದು ಕರೆದಿದ್ದಾರೆ.</verse>
				<verse number="4">ಏಕೆಂದರೆ ಸರ್ವೇಶ್ವರನೆ ಹೇಳಿರುವ ಮಾತಿವು - ‘ಇಗೋ, ನಾನು ನಿನ್ನನ್ನು ನಿನಗೂ ನಿನ್ನ ಎಲ್ಲ ಸ್ನೇಹಿತರಿಗೂ ಭಯಾನಕನನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು. ಅದನ್ನು ನೀನು ಕಣ್ಣಾರೆ ಕಾಣುವೆ. ನಾನು ಜುದೇಯರನೆಲ್ಲ ಬಾಬಿಲೋನಿನ ಅರಸನ ಕೈಗೊಪ್ಪಿಸುವೆನು. ಅವನು ಇವರನ್ನು ಬಾಬಿಲೋನಿಗೆ ಸೆರೆಯಾಗಿ ಕೊಂಡೊಯ್ದು ಕತ್ತಿಗೆ ತುತ್ತಾಗಿಸುವನು.</verse>
				<verse number="5">ಅಷ್ಟು ಮಾತ್ರವಲ್ಲ, ಈ ನಗರದ ಎಲ್ಲ ಆಸ್ತಿಯನ್ನೂ ಆದಾಯವನ್ನೂ ಸಂಪತ್ತನ್ನೂ ಹಾಗು ಜುದೇಯದ ಅರಸರ ಸಕಲ ನಿಧಿನಿಕ್ಷೇಪಗಳನ್ನೂ ಇವರ ಶತ್ರುಗಳ ಕೈವಶಮಾಡುವೆನು. ಅವರು ಅವುಗಳನ್ನು ಕೊಳ್ಳೆಹೊಡೆದು ಬಾಬಿಲೋನಿಗೆ ತೆಗೆದುಕೊಂಡು ಹೋಗುವರು.</verse>
				<verse number="6">ಪಷ್ಹೂರನೇ ಕೇಳು, ನೀನು ನಿನ್ನ ಮನೆಯ ಎಲ್ಲರೊಡನೆ ಸೆರೆಗೆ ಹೋಗುವೆ. ನೀನು ಮತ್ತು ನಿನ್ನ ಸುಳ್ಳು ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಗೆಳೆಯರೂ ಬಾಬಿಲೋನಿಗೆ ಸೇರಿ ಅಲ್ಲೆ ಸತ್ತು ಮಣ್ಣಾಗುವಿರಿ’.”</verse>
				<verse number="7">ಸರ್ವೇಶ್ವರಾ, ನೀವು ನನ್ನನ್ನು ಮರುಳಾಗಿಸಿದಿರಿ. ನಾನು ಮರುಳಾದೆ. ನೀವು ನನ್ನನ್ನು ಗೆದ್ದುಬಿಟ್ಟಿರಿ, ನೀವು ನನಗಿಂತ ಬಲಿಷ್ಠರಲ್ಲವೆ? ಎಲ್ಲರು ನನ್ನನ್ನು ಅಣಕಿಸುವವರೆ, ದಿನವೆಲ್ಲ ನಾನು ಅಪಹಾಸ್ಯಕ್ಕೆ ಬಲಿಯಾದೆ.</verse>
				<verse number="8">ನನ್ನ ಮಾತೆಲ್ಲ ಅರಚಾಟ ‘ಹಿಂಸಾಚಾರ, ಕೊಳ್ಳೆ’ ಇವೇ ನನ್ನ ಕೂಗಾಟ. ಸರ್ವೇಶ್ವರನ ವಾಕ್ಯವನ್ನು ನಾನು ಸಾರಿದೆ ಜನರ ನಿಂದೆ ಪರಿಹಾಸ್ಯಕ್ಕೆ ಗುರಿಯಾದೆ.</verse>
				<verse number="9">‘ಸರ್ವೇಶ್ವರನ ವಿಷಯವನ್ನು ಪ್ರಕಟಿಸೆನು, ಅವರ ಹೆಸರಿನಲ್ಲಿ ಇನ್ನು ಮಾತಾಡೆನು’ ಎಂದುಕೊಂಡೆನಾದರೆ ನನ್ನ ಹೃದಯದೊಳು ಸಂಕಟ ಉಂಟಾಗುತ್ತದೆ. ಸುಡುಬೆಂಕಿ ನನ್ನೆಲುಬುಗಳಲ್ಲಿ ಅಡಗಿದೆಯೋ ಎಂಬಂತೆ ಅದನ್ನು ತಡೆತಡೆದು ದಣಿದಿರುವೆ, ಇನ್ನು ಸಹಿಸಲಾಗದಿದೆ.</verse>
				<verse number="10">ಸುತ್ತಮುತ್ತಲು ದಿಗಿಲೆಂದರೆ ದಿಗಿಲು! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ.</verse>
				<verse number="11">ಆದರೆ ನನ್ನ ಸಂಗಡ ಇರುವರು ಸರ್ವೇಶ್ವರ ಭಯಂಕರ ಶೂರನಂತೆ ನನ್ನ ಹಿಂಸಕರು ಮುಗ್ಗರಿಸಿ ಬೀಳುವರು ಜಯಸಾಧಿಸದೆ. ನಾಚಿಕೆಗೆ ಈಡಾಗುವರು ತಮ್ಮ ಯೋಜನೆ ಕೈಗೂಡದೆ ಶಾಶ್ವತ ಅವಮಾನಕ್ಕೆ ಗುರಿಯಾಗುವರು ಎಂದಿಗೂ ಮರೆಯಲಾಗದಂತೆ.</verse>
				<verse number="12">ಸರ್ವಶಕ್ತರಾದ ಸರ್ವೇಶ್ವರಾ, ನೀವು ಸತ್ಪುರುಷರನ್ನು ಪರಿಶೋಧಿಸುವವರು ಅಂತರಿಂದ್ರಿಯಗಳನ್ನೂ ಅಂತರಾಳವನ್ನೂ ವೀಕ್ಷಿಸುವವರು. ನನ್ನ ವ್ಯಾಜ್ಯವನ್ನು ನಿಮಗೆ ಅರಿಕೆಮಾಡಿರುವೆನು ನನ್ನ ಹಿಂಸಕರಿಗೆ ನೀವು ವಿಧಿಸುವ ಪ್ರತಿದಂಡನೆಯನ್ನು ನಾನು ನೋಡುವಂತೆ ಮಾಡಿ.</verse>
				<verse number="13">ಸರ್ವೇಶ್ವರನನ್ನು ಸ್ತುತಿಸಿರಿ, ಸರ್ವೇಶ್ವರನನ್ನು ಸಂಕೀರ್ತಿಸಿರಿ. ಅವರು ಬಡವರ ಪ್ರಾಣವನ್ನು ಬಿಡಿಸಿದ್ದಾರೆ ಕೆಡುಕರ ಕೈಯಿಂದ.</verse>
				<verse number="14">ಶಪಿಸಲ್ಪಡಲಿ ನಾ ಹುಟ್ಟಿದಾ ದಿನವು! ಶುಭವೆನಿಸಿಕೊಳ್ಳದಿರಲಿ ತಾಯಿ ನನ್ನನ್ನು ಹೆತ್ತಿದಾ ದಿನವು.</verse>
				<verse number="15">ಶಪಿಸಲ್ಪಡಲಿ ‘ನಿನಗೆ ಗಂಡು ಹುಟ್ಟಿದೆ’ ಎಂದು ನನ್ನ ತಂದೆಗೆ ತಿಳಿಸಿದಾತ! ಕೇವಲ ಸಂತಸವನ್ನು ನನ್ನ ತಂದೆಯಲ್ಲಿ ಉಂಟುಮಾಡಿದಾತ.</verse>
				<verse number="16">ಸರ್ವೇಶ್ವರನು ಕನಿಕರಿಸದೆ ಕೆಡವಿಬಿಟ್ಟ ಪಟ್ಟಣದ ಗತಿ ಅವನಿಗಾಗಲಿ! ಬೆಳಿಗ್ಗೆ ಕಿರುಚಾಟ, ನಡುಹಗಲಲ್ಲಿ ಕೂಗಾಟ ಅವನ ಕಿವಿಗೆ ಬೀಳಲಿ!</verse>
				<verse number="17">ತಾಯಗರ್ಭದಲ್ಲಿರುವಾಗಲೆ ಅವನೇಕೆ ನನ್ನನ್ನು ಕೊಂದುಹಾಕಲಿಲ್ಲ? ಆಗ ನನ್ನ ತಾಯೇ ನನಗೆ ಗೋರಿಯಾಗುತ್ತಿದ್ದಳಲ್ಲಾ! ಆಕೆಯ ಗರ್ಭ ಸದಾ ಬಸಿರಾಗಿಯೇ ಇರುತ್ತಿತ್ತಲ್ಲಾ!</verse>
				<verse number="18">ಗರ್ಭ ಬಿಟ್ಟು ನಾನೇಕೆ ಹೊರಬಂದೆ? ಕಷ್ಟದುಃಖಗಳನ್ನು ಅನುಭವಿಸುವುದಕ್ಕೊ? ಅವಮಾನದಲ್ಲೆ ಬಾಳಿನ ದಿನಗಳನ್ನೆಲ್ಲ ಕಳೆಯುವುದಕ್ಕೊ?</verse>
			</chapter>
			<chapter number="21">
				<verse number="1">ಅರಸ ಚಿದ್ಕೀಯನು ಮಲ್ಕೀಯನ ಮಗನಾದ ಪಷ್ಹೂರನನ್ನು ಹಾಗು ಯಾಜಕ ಮಾಸೇಯನ ಮಗನಾದ ಜೆಫನ್ಯನನ್ನು ಯೆರೆಮೀಯನ ಬಳಿಗೆ ದೂತರನ್ನಾಗಿ ಕಳುಹಿಸಿದನು.</verse>
				<verse number="2">ಇವರು ಬಂದು, “ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ನಮಗೆ ವಿರುದ್ಧ ಯುದ್ಧಮಾಡುತ್ತಿರುವುದು ತಿಳಿದ ವಿಷಯ. ಸರ್ವೇಶ್ವರ ಸ್ವಾಮಿ ನಮ್ಮ ಪಕ್ಷ ವಹಿಸುವರೆ? ತಮ್ಮ ಅದ್ಭುತಗಳಲ್ಲಿ ಒಂದನ್ನು ಮಾಡಿ ಈ ಶತ್ರುವನ್ನು ನಮ್ಮಿಂದ ತೊಲಗುವಂತೆ ಮಾಡಬಹುದೆ? ದಯಮಾಡಿ ಸರ್ವೇಶ್ವರನ ಚಿತ್ತವೇನೆಂದು ವಿಚಾರಿಸಿ ತಿಳಿಸಬೇಕು,” ಎಂದು ವಿನಂತಿಸಿದರು.</verse>
				<verse number="3">ಆಗ ಯೆರೆಮೀಯನಿಗೆ ಸರ್ವೇಶ್ವರನ ವಾಣಿ ಉಂಟಾಗಿ, ಆ ದೂತರಿಗೆ, “ನೀವು ಹೋಗಿ ಚಿದ್ಕೀಯನಿಗೆ ಈ ಉತ್ತರವನ್ನು ತಿಳಿಸಿರಿ:</verse>
				<verse number="4">ಇಸ್ರಯೇಲರ ದೇವರಾದ ಸರ್ವೇಶ್ವರ ಇಂತೆನ್ನುತ್ತಾರೆ: ‘ಇಗೋ ನಿಮ್ಮ ಪೌಳಿಗೋಡೆಗೆ ಮುತ್ತಿಗೆ ಹಾಕಿರುವ ಬಾಬಿಲೋನಿನ ಅರಸನಿಗೂ ಅವನ ಸೈನಿಕರಿಗೂ ವಿರುದ್ಧವಾಗಿ ನೀವು ಹಿಡಿದಿರುವ ಆಯುಧಗಳನ್ನು ನಿಮ್ಮ ವಿರುದ್ಧವಾಗಿಯೇ ತಿರುಗಿಸಿಬಿಡುವೆನು. ಅವುಗಳನ್ನೆಲ್ಲ ಈ ನಗರದ ನಡುವೆ ಗುಡ್ಡೆಹಾಕಿಸುವೆನು.</verse>
				<verse number="5">ನಾನೇ ನಿಮಗೆ ವಿರುದ್ಧವಾಗಿ ಕಡುಕೋಪದಿಂದ, ರೋಷಾವೇಶದಿಂದ, ಕ್ರೋಧಭರಿತನಾಗಿ, ಚಾಚಿದ ಕೈಯಿಂದಲೂ ಭುಜಪರಾಕ್ರಮದಿಂದಲೂ ಯುದ್ಧಮಾಡುವೆನು.</verse>
				<verse number="6">ಈ ನಗರದಲ್ಲಿ ವಾಸಮಾಡುವ ಜನರನ್ನೂ ಜಾನುವಾರುಗಳನ್ನೂ ಹಿಂಸೆಗೆ ಗುರಿಪಡಿಸುವೆನು; ಘೋರ ಜಾಡ್ಯಕ್ಕೆ ತುತ್ತಾಗಿಸಿ ಸಾಯುವಂತೆ ಮಾಡುವೆನು.</verse>
				<verse number="7">ಬಳಿಕ ನಾನು ಜುದೇಯದ ಅರಸ ಚಿದ್ಕೀಯನನ್ನೂ ಅವನ ಸೇವಕರನ್ನೂ ಹಾಗೂ ವ್ಯಾಧಿ, ಖಡ್ಗ, ಕ್ಷಾಮಗಳಿಂದ ಅಳಿಯದೆ ಉಳಿದ ಪ್ರಜೆಗಳನ್ನೂ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಬಿಟ್ಟುಬಿಡುವೆನು. ಅವನು ಅವರನ್ನು ಕತ್ತಿಯಿಂದ ಕೊಂದುಹಾಕುವನು. ಅವರನ್ನು ಕರುಣಿಸನು, ಕನಿಕರಿಸನು, ಉಳಿಯಗೊಳಿಸನು.”</verse>
				<verse number="8">“ಇದೂ ಅಲ್ಲದೆ ಸರ್ವೇಶ್ವರ ಈ ಜನರಿಗೆ ಹೀಗೆಂದು ತಿಳಿಸಲು ನನಗೆ ಆಜ್ಞಾಪಿಸಿದ್ದಾರೆ: ‘ಇಗೋ ಜೀವದ ಮಾರ್ಗವನ್ನು ಮತ್ತು ಸಾವಿನ ಮಾರ್ಗವನ್ನು ನಿಮ್ಮ ಮುಂದೆ ತೆರೆದಿಟ್ಟಿದ್ದೇನೆ.</verse>
				<verse number="9">ನಗರದಲ್ಲೆ ನಿಲ್ಲುವವನು ಖಡ್ಗ - ಕ್ಷಾಮ - ವ್ಯಾಧಿಗಳಿಂದ ಸಾಯುವನು. ನಿಮಗೆ ಮುತ್ತಿಗೆ ಹಾಕುತ್ತಿರುವ ಬಾಬಿಲೋನಿಯಾದವರಿಗೆ ಮರೆಹೋಗಲು ನಗರವನ್ನು ಬಿಡುವವನು ಬದುಕುವನು. ತನ್ನ ಪ್ರಾಣವನ್ನಾದರು ಬಾಚಿಕೊಂಡು ಹೋಗುವನು.</verse>
				<verse number="10">ಈ ನಗರಕ್ಕೆ ಒಳಿತನ್ನು ಅಲ್ಲ, ಕೆಡುಕನ್ನು ಮಾಡಲೆಂದೆ ಇದರ ಮೇಲೆ ಕಣ್ಣಿಟ್ಟಿದ್ದೇನೆ. ಇದು ಬಾಬಿಲೋನಿಯಾದ ಅರಸನ ಕೈವಶವಾಗುವುದು. ಅವನು ಇದನ್ನು ಸುಟ್ಟು ಭಸ್ಮಮಾಡುವನು. ಇದು ಸರ್ವೇಶ್ವರನಾದ ನನ್ನ ನುಡಿ.’</verse>
				<verse number="11">“ಜುದೇಯದ ಅರಸನ ಮನೆತನದ ವಿಷಯವಾಗಿ ಸರ್ವೇಶ್ವರ ಹೇಳಿರುವ ಈ ಮಾತನ್ನು ಗಮನಿಸಿರಿ:</verse>
				<verse number="12">‘ದಾವೀದ ಮನೆತನದವರೇ, ಸರ್ವೇಶ್ವರನ ಮಾತಿದು: ಮುಂಜಾನೆಯೆ ನ್ಯಾಯನೀತಿಯನ್ನು ಪರಿಪಾಲಿಸಿರಿ; ವಂಚಿತರನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ. ಇಲ್ಲವಾದರೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ಕೋಪಾಗ್ನಿಯು ಜ್ವಾಲೆಯಂತೆ ಭುಗಿಲೇಳುವುದು, ಅದರ ಕಿಚ್ಚನ್ನು ಮುಚ್ಚಿಡಲು ಯಾರಿಂದಲೂ ಆಗದು.</verse>
				<verse number="13">ಕಣಿವೆಯಲ್ಲಿನ ನಗರಿಯೇ, ಬಯಲಿನ ಬಂಡೆಯಲ್ಲಿರುವ ಪುರಿಯೇ, ‘ನಮ್ಮ ಮೇಲೆ ಯಾರಿಳಿದು ಬಂದಾರು? ನಮ್ಮ ನಿವಾಸಗಳಿಗೆ ಯಾರು ನುಗ್ಗಿಯಾರು?’ ಎನ್ನುವವರೇ, ಇಗೋ ನಾನೆ ನಿಮಗೆ ವಿರುದ್ಧವಾಗಿದ್ದೇನೆ.</verse>
				<verse number="14">ನಿಮ್ಮ ದುಷ್ಕೃತ್ಯಗಳಿಗೆ ವಿಧಿಸುವೆನು ತಕ್ಕ ದಂಡನೆ, ಬೆಂಕಿ ಹಚ್ಚುವೆನು ನಿಮ್ಮ ಪುರಿಯೆಂಬ ವನಕ್ಕೆ, ಅದು ಕಬಳಿಸಿಬಿಡುವುದು ಸುತ್ತಮುತ್ತಣ ವಸ್ತುಗಳನ್ನು.”</verse>
			</chapter>
			<chapter number="22">
				<verse number="1">ಸರ್ವೇಶ್ವರ ಸ್ವಾಮಿ ನನಗೆ ಹೀಗೆ ಎಂದು ಆಜ್ಞೆಮಾಡಿದರು: “ನೀನು ಜುದೇಯದ ಅರಸನ ಮನೆಗೆ ಹೋಗು. ಅಲ್ಲಿ ಈ ಮಾತನ್ನು ಹೇಳು:</verse>
				<verse number="2">‘ದಾವೀದನ ಸಿಂಹಾಸನಾರೂಢನಾದ ಜುದೇಯದ ಅರಸನೇ, ಸರ್ವೇಶ್ವರನ ಮಾತನ್ನು ಕೇಳು; ನಿನ್ನ ಪರಿವಾರದವರೂ ಈ ಬಾಗಿಲುಗಳಲ್ಲಿ ಪ್ರವೇಶಿಸುವ ನಿನ್ನ ಪ್ರಜೆಗಳೂ ಕೇಳಲಿ;</verse>
				<verse number="3">ಸರ್ವೇಶ್ವರನ ಸಂದೇಶ ಇದು: ನ್ಯಾಯನೀತಿಯನ್ನು ಆಚರಿಸಿರಿ. ವಂಚಿತನಾದವನನ್ನು ದೋಚಿಕೊಳ್ಳುವವನ ಕೈಯಿಂದ ಬಿಡಿಸಿರಿ. ಪರದೇಶೀಯರಿಗೆ, ಅನಾಥರಿಗೆ, ವಿಧವೆಯರಿಗೆ ಅನ್ಯಾಯಮಾಡಬೇಡಿ, ಅವರನ್ನು ಹಿಂಸಿಸಬೇಡಿ. ನಿರಪರಾಧಿಗಳ ರಕ್ತವನ್ನು ಈ ಸ್ಥಳದಲ್ಲಿ ಸುರಿಸಬೇಡಿ.</verse>
				<verse number="4">ನೀವು ಈ ಆಜ್ಞೆಗಳನ್ನು ಮನಃಪೂರ್ವಕವಾಗಿ ಕೈಗೊಂಡು ನಡೆದಿರಾದರೆ ದಾವೀದನ ಸಿಂಹಾಸನಾರೂಢರಾದ ಅರಸರು ರಥಾಶ್ವಗಳನ್ನೇರಿ ತಮ್ಮ ಪರಿವಾರದೊಡನೆ ಹಾಗು ಪ್ರಜೆಗಳೊಡನೆ ಈ ಅರಮನೆಯ ಬಾಗಿಲುಗಳಲ್ಲಿ ಪ್ರವೇಶಿಸುವರು.</verse>
				<verse number="5">ನೀವು ಈ ಮಾತುಗಳನ್ನು ಕೇಳದೆಹೋದರೆ ಈ ಅರಮನೆ ಹಾಳುಬೀಳುವುದು. ಇದನ್ನು ನನ್ನ ಮೇಲೆ ಆಣೆಯಿಟ್ಟು ಹೇಳುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="6">ಹೌದು, ಜುದೇಯದ ಅರಸನ ಮನೆತನವನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ನನ್ನ ದೃಷ್ಟಿಗೆ ನೀನಿರುವೆ ಗಿಲ್ಯಾದಿನಂತೆ, ಲೆಬನೋನಿನ ಶಿಖರದಂತೆ ಆದರೆ ನಿನ್ನನ್ನು ಮರುಭೂಮಿಯಂತೆ, ನಿರ್ಜನಪ್ರದೇಶದಂತೆ ಮಾಡುವೆನೆಂಬುದು ನಿಶ್ಚಯ.</verse>
				<verse number="7">ಆಯುಧ ಸನ್ನದ್ಧರಾದ ಸಂಹಾರಕರನ್ನು ನಿನಗೆ ವಿರುದ್ಧ ಏರ್ಪಡಿಸುವೆನು. ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಬೆಂಕಿಗೆ ಕಡಿದು ಹಾಕುವರು.</verse>
				<verse number="8">ಅನೇಕ ಅನ್ಯಜನಾಂಗದವರು ಈ ನಗರದ ಮಾರ್ಗವಾಗಿ ಹೋಗುತ್ತಾ ಸರ್ವೇಶ್ವರ ಈ ಮಹಾನಗರಕ್ಕೆ ಹೀಗೇಕೆ ಮಾಡಿದರೆಂದು ಮಾತಾಡಿಕೊಳ್ಳುವರು.</verse>
				<verse number="9">‘ಈ ನಗರದವರು ತಮ್ಮ ದೇವರಾದ ಸರ್ವೇಶ್ವರನ ಒಡಂಬಡಿಕೆಯನ್ನು ನಿರಾಕರಿಸಿ ಅನ್ಯದೇವತೆಗಳನ್ನು ಪೂಜಿಸಿ ಆರಾಧಿಸಿದ್ದರಿಂದಲೇ ಇದಕ್ಕೆ ಈ ಗತಿಯಾಯಿತು’ ಎಂದು ಹೇಳಿಕೊಳ್ಳುವರು.”</verse>
				<verse number="10">“ಸತ್ತವನಿಗಾಗಿ (ಯೋಷೀಯನಿಗಾಗಿ) ಅಳಬೇಡಿ ಅವನಿಗಾಗಿ ಗೋಳಾಡಬೇಡಿ. ಬದಲಿಗೆ ಸೆರೆಹೋದವನಿಗಾಗಿ ಬಿಕ್ಕಿಬಿಕ್ಕಿ ಅಳಿರಿ ಇನ್ನು ಅವನು ಹಿಂತಿರುಗನು ಸ್ವಂತ ನಾಡನ್ನು ಮತ್ತೆ ನೋಡನು!</verse>
				<verse number="11">ಜುದೇಯದ ಅರಸನಾದ ಯೋಷೀಯನ ಮಗನೂ ತನ್ನ ತಂದೆ ಯೋಷೀಯನ ತರುವಾಯ ಪಟ್ಟಕ್ಕೆ ಬಂದವನೂ ಹಾಗು ಇಲ್ಲಿಂದ ಸೆರೆಯಾಗಿ ಹೋದವನೂ ಆದ ಶಲ್ಲೂಮನ ವಿಷಯವಾಗಿ ಸರ್ವೇಶ್ವರ ಹೇಳುವುದು ಏನೆಂದರೆ:</verse>
				<verse number="12">“ಅವನು ಇಲ್ಲಿಗೆ ಇನ್ನು ಹಿಂದಿರುಗಿ ಬರುವುದಿಲ್ಲ. ಅವನನ್ನು ಎಲ್ಲಿಗೆ ಸೆರೆ ಒಯ್ದರೋ ಅಲ್ಲೇ ಅವನು ಸಾಯುವನು. ಈ ನಾಡನ್ನು ಇನ್ನು ಅವನು ನೋಡುವುದಿಲ್ಲ.”</verse>
				<verse number="13">“ನೆರೆಯವನಿಗೆ ಕೂಲಿಕೊಡದೆ ಬಿಟ್ಟಿಕೆಲಸ ಮಾಡಿಸಿಕೊಂಡು ಅರಮನೆಯನ್ನು ಕಟ್ಟಿಸಿಕೊಳ್ಳುವವನಿಗೆ ಧಿಕ್ಕಾರ! ಅವನು ಅರಮನೆಯನ್ನು ಕಟ್ಟಿಸಿಕೊಳ್ಳುವುದು ಅನೀತಿಯಿಂದ ಮಹಡಿಗಳನ್ನು ನಿರ್ಮಿಸಿಕೊಳ್ಳುವುದು ಅನ್ಯಾಯದಿಂದ.</verse>
				<verse number="14">‘ಸವಿಸ್ತಾರವಾದ ಅರಮನೆ ನಿರ್ಮಿಸಿಕೊಳ್ಳುವೆನು ವಿಶಾಲವಾದ ಮಹಡಿ ಕಟ್ಟಿಸಿಕೊಳ್ಳುವೆನು’ ಎನ್ನುವನಿಗೆ ಧಿಕ್ಕಾರ! ಅವನು ಅಗಲಗಲವಾದ ಕಿಟಕಿಗಳನ್ನಿಡಿಸಿಕೊಳ್ಳುತ್ತಾನೆ ಅವುಗಳಿಗೆ ಕೆಂಪು ಬಣ್ಣವನ್ನೂ ಬಳಿಸಿಕೊಳ್ಳುತ್ತಾನೆ.</verse>
				<verse number="15">ದೇವದಾರಿನ ಕೆಲಸದಲ್ಲಿ, ಬೇರೆಯವರನ್ನು ಮೀರಿಸುವುದರಲ್ಲಿ ಅಡಗಿದೆಯೇ ನಿನ್ನ ದೊರೆತನದ ಹಿರಿಮೆ? ನಿನ್ನ ತಂದೆ ಎಷ್ಟೇ ಕುಡಿದರೂ ತಿಂದರೂ ನ್ಯಾಯನೀತಿಯನ್ನು ಪಾಲಿಸುತ್ತಿದ್ದನಲ್ಲವೆ? ಆಗ ಅವನಿಗೆ ಎಲ್ಲವು ನೆಮ್ಮದಿಯಾಗಿತ್ತಲ್ಲವೆ?</verse>
				<verse number="16">ಆತ ದೀನದಲಿತರಿಗೆ ನ್ಯಾಯ ದೊರಕಿಸುತ್ತಿದ್ದ ಆಗ ಅವನಿಗೆ ಎಲ್ಲವು ಸುಗಮವಾಗಿತ್ತು. ನನ್ನನ್ನು ಅರಿಯುವುದು ಎಂದರೆ ಇದುವೇ. ಇದು ಸರ್ವೇಶ್ವರನಾದ ನನ್ನ ನುಡಿ.</verse>
				<verse number="17">ಆದರೆ ನಿನ್ನ ದೃಷ್ಟಿ, ನಿನ್ನ ಮನಸ್ಸು ನೆಲೆಗೊಂಡಿವೆ ದುರ್ಲಾಭದಲ್ಲಿ, ನಿರ್ದೋಷಿಯ ರಕ್ತ ಸುರಿಸುವುದರಲ್ಲಿ ದಬ್ಬಾಳಿಕೆಯಲ್ಲಿ, ಹಿಂಸಾಚಾರಗಳಲ್ಲಿ.”</verse>
				<verse number="18">ಆದಕಾರಣ ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ವಿಷಯವಾಗಿ ಸರ್ವೇಶ್ವರ ಹೀಗೆನ್ನುತ್ತಾರೆ: “ಇವನಿಗಾಗಿ ಯಾರೂ ‘ಅಯ್ಯೋ ಸೋದರಸೋದರಿಯೇ’ ಎಂದು ಗೋಳಾಡರು ‘ಅಯ್ಯೋ ನಮ್ಮೊಡೆಯಾ, ರಾಜಾಧಿರಾಜ’ ಎಂದು ಪ್ರಲಾಪಿಸರು.</verse>
				<verse number="19">ಇವನನ್ನು ಜೆರುಸಲೇಮಿನ ಬಾಗಿಲ ಹೊರಗಡೆ ಬಿಸಾಡುವರು ಕತ್ತೆಗೆ ತಕ್ಕ ಮರ್ಯಾದೆಯೊಂದಿಗೆ ಹೂಣುವರು.”</verse>
				<verse number="20">“ಲೆಬನೋನ್ ಬೆಟ್ಟವನ್ನು ಹತ್ತಿ ಬೊಬ್ಬೆಯಿಡು! ಬಾಷಾನಿನಲ್ಲಿ ಮೊರೆಯಿಡು! ಅಬಾರೀಮಿನಲ್ಲಿ ಕಿರುಚಾಡು! ಏಕೆಂದರೆ ನಿನ್ನ ಮಿಂಡರೆಲ್ಲ ಹಾಳಾಗಿಹೋದರು!</verse>
				<verse number="21">ನೀನು ನೆಮ್ಮದಿಯಾಗಿದ್ದ ಕಾಲದಲ್ಲಿ ನಿನ್ನೊಡನೆ ಮಾತಾಡಿದೆ ಆದರೆ ನೀನು, “ಕೇಳಲೊಲ್ಲೆ” ಎಂದು ಹೇಳಿಬಿಟ್ಟೆ. ನನ್ನ ಮಾತಿಗೆ ಕಿವಿಗೊಡದಿರುವುದು ನಿನಗೆ ಬಾಲ್ಯದಿಂದಲೆ ವಾಡಿಕೆ!</verse>
				<verse number="22">ನಿನ್ನನ್ನು ಅಟ್ಟಿ ಮೇಯಿಸುವ ಕುರುಬರನ್ನು ಗಾಳಿ ಅಟ್ಟಿಸಿಕೊಂಡು ಹೋಗುವುದು. ನಿನ್ನ ಮಿಂಡರನ್ನು ಸೆರೆಹಿಡಿದುಕೊಂಡು ಹೋಗುವರು. ಆಗ ಖಂಡಿತವಾಗಿ ನೀನು ಆಶಾಭಂಗಪಡುವೆ ನಿನ್ನ ದುಷ್ಕೃತ್ಯಗಳ ನಿಮಿತ್ತ ಅವಮಾನಕ್ಕೀಡಾಗುವೆ.</verse>
				<verse number="23">‘ಲೆಬನೋನ್’ ಅರಮನೆಯಲ್ಲಿ ವಾಸಿಸುವವಳೇ, ದೇವದಾರುಗಳ ನಡುವೆ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂಥ ಸಂಕಟಗಳು ಸಂಭವಿಸಿದಾಗ ನಿನಗೊದಗುವ ಪರಿಸ್ಥಿತಿ ಎಷ್ಟೋ ದುಃಖಕರ!</verse>
				<verse number="24">ಸರ್ವೇಶ್ವರನ ಮಾತಿದು - “ನನ್ನ ಜೀವದಾಣೆ, ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಕೊನ್ಯನೇ, ನೀನು ನನ್ನ ಬಲಗೈ ಮುದ್ರೆಯುಂಗುರವಾಗಿದ್ದರೂ ನಾನು ನಿನ್ನನ್ನು ಅಲ್ಲಿಂದ ಕಿತ್ತುಹಾಕುತ್ತಿದ್ದೆ.</verse>
				<verse number="25">ನಿನ್ನ ಪ್ರಾಣ ಹುಡುಕುತ್ತಿರುವವರ ಕೈಗೆ, ನಿನ್ನಲ್ಲಿ ಭಯಹುಟ್ಟಿಸುವವರ ಕೈಗೆ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಮತ್ತು ಬಾಬಿಲೋನಿನ ಜನರ ಕೈಗೆ ನಿನ್ನನ್ನು ಕೊಟ್ಟುಬಿಡುವೆನು.</verse>
				<verse number="26">ನಿನ್ನನ್ನೂ ನಿನ್ನ ಹೆತ್ತ ತಾಯಿಯನ್ನೂ ಜನ್ಮಭೂಮಿಯಲ್ಲದ ಅನ್ಯದೇಶಕ್ಕೆ ಎಸೆದುಬಿಡುವೆನು. ನೀವು ಅಲ್ಲೇ ಸಾಯುವಿರಿ.</verse>
				<verse number="27">ಹಿಂದಿರುಗಬೇಕೆಂದು ಹಂಬಲಿಸಿದರೂ ತಾಯ್ನಾಡಿಗೆ ಹಿಂದಿರುಗುವುದೇ ಇಲ್ಲ.”</verse>
				<verse number="28">ಕೊನ್ಯನು ಬಿಸಾಡಲ್ಪಟ್ಟ ಒಡಕು ಕುಡಿಕೆಯೆ? ಯಾರಿಗೂ ಬೇಡವಾದ ಮಣ್ಣಿನ ಮಡಿಕೆಯೆ? ಅವನೂ ಅವನ ಮಡದಿಮಕ್ಕಳೇಕೆ ಬೀದಿಪಾಲಾಗಿದ್ದಾರೆ?</verse>
				<verse number="29">ನಾಡೇ, ನಾಡೇ, ಎಲೈ ನಾಡೇ, ಸರ್ವೇಶ್ವರನ ಮಾತಿಗೆ ಕಿವಿಗೊಡು.</verse>
				<verse number="30">ಹೀಗಿದೆ ಸರ್ವೇಶ್ವರನ ನುಡಿ: “ಇವನು ಮಕ್ಕಳನ್ನು ಕಳೆದುಕೊಂಡ ವ್ಯಕ್ತಿ ತನ್ನ ಜನ್ಮವನ್ನು ಸಾರ್ಥಕ ಮಾಡಿಕೊಳ್ಳದ ವ್ಯಕ್ತಿ ಇವನ ಸಂತಾನದಲ್ಲಿ ಇನ್ನು ಯಾವನೂ ದಾವೀದನ ಸಿಂಹಾಸನದಲ್ಲಿ ಕೂರನು, ಜುದೇಯವನ್ನು ಆಳಿ ಬಾಳನು.”</verse>
			</chapter>
			<chapter number="23">
				<verse number="1">“ನನ್ನ ಮಂದೆಯ ಕುರಿಗಳನ್ನು ಚದರಿಸಿ ಹಾಳುಮಾಡುವ ಕುರುಬರಿಗೆ ಧಿಕ್ಕಾರ!” ಇದು ಸರ್ವೇಶ್ವರ ಸ್ವಾಮಿಯ ನುಡಿ.</verse>
				<verse number="2">ಇಸ್ರಯೇಲರ ದೇವರಾದ ಸರ್ವೇಶ್ವರ, ತಮ್ಮ ಜನರೆಂಬ ಕುರಿಗಳನ್ನು ಮೇಯಿಸುವ ಕುರಿಗಾಹಿಗಳ ದ್ರೋಹವನ್ನು ಅರಿತಿದ್ದಾರೆ. ಅಂಥವರನ್ನು ಕುರಿತು ಹೀಗೆನ್ನುತ್ತಾರೆ: “ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟಿದ್ದೀರಿ. ಅವುಗಳ ಬಗ್ಗೆ ಎಚ್ಚರ ವಹಿಸಲೇ ಇಲ್ಲ. ನಿಮ್ಮ ನೀಚಕಾರ್ಯಗಳ ನಿಮಿತ್ತ ನಿಮ್ಮನ್ನು ವಿಚಾರಣೆಗೆ ಗುರಿಪಡಿಸುವೆನು.</verse>
				<verse number="3">ನನ್ನ ಮಂದೆಯನ್ನು ಯಾವ ಯಾವ ದೇಶಗಳಿಗೆ ಅಟ್ಟಲಾಗಿದೆಯೋ ಆ ಎಲ್ಲ ದೇಶಗಳಿಂದ ಅಳಿದುಳಿದ ಕುರಿಗಳನ್ನು ಒಟ್ಟುಗೂಡಿಸಿ ತಮ್ಮ ತಮ್ಮ ಹಟ್ಟಿಗಳಿಗೆ ಮರಳಿ ಬರಮಾಡುವೆನು. ಅವು ದೊಡ್ಡ ಪೀಳಿಗೆಯಾಗಿ ಬೆಳೆಯುವುವು.</verse>
				<verse number="4">ನಾನು ಅವುಗಳ ಮೇಲೆ ಕುರಿಗಾಹಿಗಳನ್ನು ನೇಮಿಸುವೆನು. ಅವರು ಅವುಗಳನ್ನು ಪರಿಪಾಲಿಸುವರು. ಅವು ಇನ್ನು ಹೆದರಬೇಕಾಗಿಲ್ಲ, ಬೆದರಬೇಕಾಗಿಲ್ಲ. ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="5">ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.</verse>
				<verse number="6">ಆತನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿ ಇರುವರು. ಇಸ್ರಯೇಲರು ನೆಮ್ಮದಿಯಿಂದ ಬಾಳುವರು. ‘ಯೆಹೋವ ಚಿದ್ಕೇನು’ (ಎಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಆತನಿಗಿರುವುದು.</verse>
				<verse number="7">ಬರಲಿರುವ ಆ ಕಾಲದಲ್ಲಿ ಜನರು, ‘ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವ ಪದ್ಧತಿಯನ್ನು ಬಿಟ್ಟುಬಿಡುವರು.</verse>
				<verse number="8">ಬದಲಿಗೆ ‘ಇಸ್ರಯೇಲ್ ಮನೆತನವೆಂಬ ಸಂತಾನವನ್ನು ಉತ್ತರನಾಡಿನಿಂದಲೂ ಅವರನ್ನು ತಳ್ಳಲಾಗಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ ಉದ್ಧರಿಸಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವರು. ಅವರು ಸ್ವಂತ ನಾಡಿನಲ್ಲಿ ಸುಖವಾಗಿ ಬಾಳುವರು. ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="9">ಪ್ರವಾದಿಗಳ ವಿಷಯ: ನನ್ನ ಗುಂಡಿಗೆ ಒಡೆದುಹೋಗಿದೆ ನನ್ನೆಲುಬುಗಳು ನಡುನಡುಗುತ್ತಿವೆ ಸರ್ವೇಶ್ವರನಿಗೆ, ಆತನ ಪವಿತ್ರವಾಕ್ಯಕ್ಕೆ ಪರವಶನಾದ ನಾನು ಅಮಲೇರಿದಂತವನಾದೆ. ಹೌದು, ಮದ್ಯಪಾನಕ್ಕೆ ಸೋತ ಮನುಷ್ಯನಂತಾದೆ.</verse>
				<verse number="10">ದೈವಶಾಪದ ನಿಮಿತ್ತ ದೇಶ ದುಃಖಿಸುತ್ತಿದೆ ವ್ಯಭಿಚಾರದಿಂದ ನಾಡು ತುಂಬಿತುಳುಕುತ್ತಿದೆ ಅಡವಿಯ ಹುಲ್ಲುಗಾವಲು ಬಾಡಿದೆ. ನಾಡಿನ ಜನರು ಹಿಡಿದೋಡುತ್ತಿರುವ ಮಾರ್ಗ ದುರ್ಮಾರ್ಗ ಅನ್ಯಾಯ ಸಾಧನೆಗಾಗಿಯೆ ಅವರ ಅಧಿಕಾರ ಪ್ರಯೋಗ.</verse>
				<verse number="11">“ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು! ನನ್ನಾಲಯದಲ್ಲೆ ಅವರು ನಡೆಸುವ ಕೆಟ್ಟತನವನ್ನು ನಾನು ಕಂಡಿರುವೆನು.</verse>
				<verse number="12">ಕತ್ತಲೊಳು ಜಾರಿಬೀಳುವ ಇಳುಮೇಡು ಅವರ ಮಾರ್ಗ ತಳ್ಳಲ್ಪಡುವರು, ಅಂಧಕಾರದೊಳು ಬಿದ್ದುಹೋಗುವರು ಕೇಡನ್ನು ಅವರ ಮೇಲೆ ಬರಮಾಡುವೆನು ವಿಚಾರಣೆ ವರುಷದ ಕೇಡನ್ನು ಬರಮಾಡುವೆನು ಸರ್ವೇಶ್ವರನ ನುಡಿ ಇದು.”</verse>
				<verse number="13">“ಸಮಾರ್ಯದ ಪ್ರವಾದಿಗಳ ಅಸಹ್ಯ ಕಾರ್ಯಗಳನ್ನು ನೋಡಿರುವೆನು ಬಾಳ್‍ದೇವತೆಯ ಆವೇಶದಿಂದ ಪ್ರವಾದಿಸಿದರವರು ಹೀಗೆ ಇಸ್ರಯೇಲೆಂಬ ನನ್ನ ಜನರನ್ನು ಮಾರ್ಗ ತಪ್ಪಿಸಿದರು.</verse>
				<verse number="14">ಜೆರುಸಲೇಮಿನ ಪ್ರವಾದಿಗಳಲ್ಲೂ ಭೀಕರವಾದುವನ್ನು ನೋಡಿರುವೆನು ವ್ಯಭಿಚಾರ ಮಾಡುತ್ತಾರೆ, ಸುಳ್ಳು ಹಾದಿಯನ್ನು ಹಿಡಿಯುತ್ತಾರೆ ದುರುಳರು ದುರಾಚಾರವನ್ನು ಬಿಡದಂತೆ ದೃಢಪಡಿಸುತ್ತಾರೆ. ನನ್ನ ದೃಷ್ಟಿಗೆ ಅವರೆಲ್ಲರು ಸೊದೋಮಿನಂತೆ, ಆ ಪುರನಿವಾಸಿಗಳು ನನ್ನ ಕಣ್ಣಿಗೆ ಗೊಮೋರದಂತೆ.”</verse>
				<verse number="15">ಆದಕಾರಣ ಸರ್ವಶಕ್ತ ಸರ್ವೇಶ್ವರ ಪ್ರವಾದಿಗಳ ವಿಷಯದಲ್ಲಿ ಹೇಳುವುದನ್ನು ಕೇಳಿ: “ಇವರು ಇಟ್ಟಿಕಾಯನ್ನು ತಿನ್ನುವಂತೆ ಮಾಡುವೆನು. ವಿಷಬೆರೆತ ನೀರನ್ನು ಕುಡಿಯುವಂತೆ ಮಾಡುವೆನು ಜೆರುಸಲೇಮಿನ ಈ ಪ್ರವಾದಿಗಳಿಂದ ಭ್ರಷ್ಟತನ ನಾಡಿನಲ್ಲೆಲ್ಲೂ ಹರಡಿರುವುದು.”</verse>
				<verse number="16">ಸರ್ವಶಕ್ತ ಸರ್ವೇಶ್ವರನ ನುಡಿಯಿದು: “ಪ್ರವಾದಿಗಳು ನಿಮಗೆ ಹೇಳುವ ಮಾತುಗಳನ್ನು ಕೇಳಬೇಡಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಂಬಿಕೆ ನಿರೀಕ್ಷೆಯನ್ನು ಹುಟ್ಟಿಸುತ್ತಾರಷ್ಟೆ. ಸರ್ವೇಶ್ವರನ ಬಾಯಿಂದ ಹೊರಟದ್ದನ್ನು ನುಡಿಯದೆ ತಮ್ಮ ಸ್ವಂತ ಮನಸ್ಸಿಗೆ ತೋಚಿದ್ದನ್ನೇ ಹೇಳುತ್ತಾರೆ.</verse>
				<verse number="17">ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂದು ಸರ್ವೇಶ್ವರನೇ ನುಡಿದಿದ್ದಾರೆ’ ಎಂದು ಹೇಳುತ್ತಲೇ ಇದ್ದಾರೆ. ಹಟಮಾರಿ ಹೃದಯಿಗಳೆಲ್ಲರಿಗೆ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.”</verse>
				<verse number="18">ಇವರಲ್ಲಿ ಯಾರು ತಾನೆ ಸರ್ವೇಶ್ವರನ ಆಲೋಚನಾ ಸಭೆಯಲ್ಲಿ ಹಾಜರಿದ್ದರು? ಸರ್ವೇಶ್ವರನ ವಾಕ್ಯವನ್ನು ಕೇಳಿ ತಿಳಿದುಕೊಂಡವನಾರು? ಆ ವಾಕ್ಯಕ್ಕೆ ಲಕ್ಷ್ಯಕೊಟ್ಟು ಗ್ರಹಿಸಿಕೊಂಡವನಾರು?</verse>
				<verse number="19">ಇಗೋ ಕೇಳಿ: ಸರ್ವೇಶ್ವರನ ಕೋಪವೆಂಬ ಬಿರುಗಾಳಿ ಹೊರಟಿದೆ. ಅದು ದುಷ್ಟರ ತಲೆಯ ಮೇಲೆ ಸುಂಟರಗಾಳಿಯಂತೆ ಬಡಿಯುವುದು.</verse>
				<verse number="20">ಸರ್ವೇಶ್ವರ ತಮ್ಮ ಅಂತರಾಳದ ಸಂಕಲ್ಪಗಳನ್ನು ನಡೆಸಿ ನೆರವೇರಿಸುವ ತನಕ ಅವರ ಆ ಕೋಪವು ಹಿಂದಿರುಗದು. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸಿಕೊಳ್ಳುವಿರಿ.</verse>
				<verse number="21">ಸರ್ವೇಶ್ವರ: “ಈ ಪ್ರವಾದಿಗಳನ್ನು ಕಳುಹಿಸಿದವನು ನಾನಲ್ಲ; ತಾವೇ ಓಡೋಡಿ ಬಂದಿದ್ದಾರೆ. ನಾನು ಇವರಿಗೆ ಏನೂ ಹೇಳಲಿಲ್ಲ; ತಾವೇ ಪ್ರವಾದನೆ ಮಾಡುತ್ತಿದ್ದಾರೆ.</verse>
				<verse number="22">ಇವರು ನನ್ನ ಆಲೋಚನಾ ಸಭೆಯಲ್ಲಿ ಹಾಜರಿದ್ದಿದ್ದರೆ, ನನ್ನ ವಾಕ್ಯಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸುತ್ತಿದ್ದರು; ಅವರನ್ನು ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು.</verse>
				<verse number="23">“ಹತ್ತಿರದಲ್ಲಿ ಇದ್ದರೆ ಮಾತ್ರ ನಾನು ದೇವರೋ? ದೂರದಲ್ಲಿದ್ದರೆ ನಾನು ದೇವರಲ್ಲವೋ?</verse>
				<verse number="24">ನನ್ನ ಕಣ್ಣಿಗೆ ಬೀಳದಂತೆ ಯಾವನಾದರು ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೆ?</verse>
				<verse number="25">‘ನನಗೆ ಕನಸು ಬಿತ್ತು, ಕನಸುಬಿತ್ತು’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದನೆ ಮಾಡುವವರ ನುಡಿಯನ್ನು ಕೇಳಿದ್ದೇನೆ.</verse>
				<verse number="26">ಇವರ ಪೂರ್ವಜರು ಬಾಳ್‍ದೇವತೆಯನ್ನು ಸೇರಿಕೊಂಡು ನನ್ನ ಹೆಸರನ್ನು ಮರೆತುಬಿಟ್ಟರು. ಅದೇ ಪ್ರಕಾರ ಈ ಪ್ರವಾದಿಗಳು ಸ್ವಕಲ್ಪಿತ ಸುಳ್ಳು ಕನಸುಗಳನ್ನು ಒಬ್ಬರಿಗೊಬ್ಬರು ತಿಳಿಸುವುದರ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸುತ್ತಿದ್ದಾರೆ.</verse>
				<verse number="27">ಇಂಥ ಯೋಚನೆ ಈ ಕಳ್ಳ ಪ್ರವಾದಿಗಳ ಮನದಲ್ಲಿ ಎಲ್ಲಿಯವರೆಗೆ ಇರುವುದು? ಕನಸು ಕಂಡ ಪ್ರವಾದಿ ತನ್ನ ಕನಸನ್ನು ಬೇಕಾದರೆ ತಿಳಿಸಲಿ.</verse>
				<verse number="28">ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ.</verse>
				<verse number="29">ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ? ನನ್ನ ವಾಕ್ಯ ಬೆಂಕಿಗೆ ಸಮಾನ; ಬಂಡೆಯನ್ನು ಪುಡಿಪುಡಿ ಮಾಡುವ ಸುತ್ತಿಗೆಗೆ ಸಮಾನ. ಇದು ಸರ್ವೇಶ್ವರನಾದ ನನ್ನ ನುಡಿ.</verse>
				<verse number="30">ನನ್ನ ವಾಕ್ಯಗಳನ್ನು ಒಬ್ಬರಿಂದೊಬ್ಬರು ಕದ್ದುಕೊಳ್ಳುವ ಪ್ರವಾದಿಗಳಿಗೆ ನಾನು ವಿರುದ್ಧವಾಗಿ ಇದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.</verse>
				<verse number="31">ತಮ್ಮ ನಾಲಿಗೆಗಳನ್ನು ಆಡಿಸುತ್ತಾ, ‘ಇದು ಸರ್ವೇಶ್ವರನ ನುಡಿ’ ಎಂದು ಹೇಳುವ ಪ್ರವಾದಿಗಳನ್ನು ನಾನು ಪ್ರತಿಭಟಿಸುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.</verse>
				<verse number="32">ಸುಳ್ಳು ಕನಸುಗಳನ್ನು ಪ್ರಕಟಿಸುತ್ತಾ ಹಾಗು ವಿವರಿಸುತ್ತಾ ತಮ್ಮ ಅಬದ್ಧ ಮಾತುಗಳಿಂದಲೂ ಕಚ್ಚಾಟದಿಂದಲೂ ನನ್ನ ಜನರಿಗೆ ದಾರಿ ತಪ್ಪಿಸುವ ಪ್ರವಾದಿಗಳನ್ನು ನಾನು ಖಂಡಿಸುತ್ತೇನೆ. ನಾನು ಅವರನ್ನು ಕಳುಹಿಸಲಿಲ್ಲ, ಅಥವಾ ಅವರಿಗೆ ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಇಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="33">“ಪ್ರವಾದಿಯಾಗಲಿ, ಯಾಜಕನಾಗಲಿ, ಈ ಜನರಲ್ಲಿ ಯಾರೇ ಆಗಲಿ, ‘ಸರ್ವೇಶ್ವರ ದಯಪಾಲಿಸಿರುವ ಹೊರೆ ಏನು?’ ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆಂದು ಹೇಳು: ‘ನೀವೇ ಸರ್ವೇಶ್ವರನ ಹೊರೆ. ನಿಮ್ಮನ್ನು ಅವರು ಎಸೆದುಬಿಡುವರು.’</verse>
				<verse number="34">“ಸರ್ವೇಶ್ವರನ ಹೊರೆ” ಎಂದು ಒಬ್ಬ ಪ್ರವಾದಿಯಾಗಲಿ, ಯಾಜಕನಾಗಲಿ ಅಥವಾ ಒಬ್ಬ ಜನಸಾಮಾನ್ಯನೇ ಆಗಲಿ, ಹೇಳಿದ್ದೇ ಆದರೆ ನಾನು ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು.</verse>
				<verse number="35">“ಸರ್ವೇಶ್ವರ ಕೊಟ್ಟ ಉತ್ತರವೇನು? ಸರ್ವೇಶ್ವರ ನುಡಿದದ್ದು ಏನು?” ಎಂದು ನಿಮ್ಮ ನಿಮ್ಮ ನೆರೆಹೊರೆಯವರನ್ನು ಮತ್ತು ಅಣ್ಣತಮ್ಮಂದಿರನ್ನು ವಿಚಾರಿಸಬೇಕೇ ಹೊರತು</verse>
				<verse number="36">‘ಸರ್ವೇಶ್ವರನ ಹೊರೆ’ ಎಂಬ ಮಾತನ್ನು ಎತ್ತಲೇಕೂಡದು. ಪ್ರತಿಯೊಬ್ಬನ ನುಡಿ ಅವನವನಿಗೊಂದು ಹೊರೆ. ಜೀವಸ್ವರೂಪರಾದ ದೇವರ ನುಡಿಗಳನ್ನು ಹೌದು, ನಮ್ಮ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ನುಡಿಗಳನ್ನು ನೀವು ತಲೆಕೆಳಗಾಗಿಸಿದ್ದೀರಿ.</verse>
				<verse number="37">“ಸರ್ವೇಶ್ವರನಿಂದ ನಿಮಗೆ ಯಾವ ಉತ್ತರ ದೊರಕಿತು? ಸರ್ವೇಶ್ವರ ಏನು ನುಡಿದಿದ್ದಾರೆ?” ಎಂದು ಪ್ರವಾದಿಯನ್ನು ಕೇಳಿರಿ.</verse>
				<verse number="38">“ಸರ್ವೇಶ್ವರನ ಹೊರೆ” ಎಂದು ಹೇಳಬೇಡಿ. ಹೇಳಿದರೆ ಸರ್ವೇಶ್ವರ ಇಂತೆನ್ನುತ್ತಾರೆ: “ನಾನು ನಿಮಗೆ ‘ಸರ್ವೇಶ್ವರನ ಹೊರೆ’ ಎಂಬ ಮಾತನ್ನು ಎತ್ತಲೇಕೂಡದೆಂದು, ಹೇಳಿಕಳುಹಿಸಿದರೂ ನೀವು ಎತ್ತಿದ್ದೀರಿ.</verse>
				<verse number="39">ಈ ಕಾರಣ ನಿಮ್ಮನ್ನು ಮತ್ತು ನಿಮಗೂ ನಿಮ್ಮ ಪೂರ್ವಜರಿಗೂ ನಾನು ಕೊಟ್ಟ ನಗರವನ್ನು ನನ್ನೆದುರಿನಿಂದ ಎತ್ತಿ ಎಸೆದುಬಿಡುವೆನು.</verse>
				<verse number="40">ನೀವು ನಿಂದೆಗೆ ಗುರಿಯಾಗುವಿರಿ. ಎಂದಿಗೂ ಮರೆಯಲಾಗದ ಶಾಶ್ವತ ಅವಮಾನವನ್ನು ನಿಮಗೆ ಬರಮಾಡುವೆನು.”</verse>
			</chapter>
			<chapter number="24">
				<verse number="1">ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗ ಹಾಗೂ ಜುದೇಯದ ಅರಸ ಆದ ಯೆಕೊನ್ಯನನ್ನು, ಜುದೇಯದ ಪ್ರಧಾನಿಗಳನ್ನು, ಶಿಲ್ಪಿಗಳನ್ನು ಮತ್ತು ಕಮ್ಮಾರರನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದನು. ಇದಾದ ಬಳಿಕ ಸರ್ವೇಶ್ವರ ಸ್ವಾಮಿ ತಮ್ಮ ಆಲಯದ ಮುಂದೆ ಇಟ್ಟಿದ್ದ, ಅಂಜೂರದ ಹಣ್ಣು ತುಂಬಿದ್ದ, ಎರಡು ಬುಟ್ಟಿಗಳನ್ನು ನನಗೆ ಕಾಣುವಂತೆ ಮಾಡಿದರು.</verse>
				<verse number="2">ಒಂದು ಬುಟ್ಟಿಯಲ್ಲಿ ಕಾಲಕ್ಕೆ ಮುಂಚೆ ಮಾಗಿದ್ದ ಹಣ್ಣುಗಳು ತುಂಬಿದ್ದವು. ಅವು ಅತ್ಯುತ್ತಮವಾದ ಅಂಜೂರದ ಹಣ್ಣುಗಳು. ಇನ್ನೊಂದು ಬುಟ್ಟಿಯಲ್ಲಿ ಯಾರೂ ತಿನ್ನಲಾಗದಷ್ಟು ಅಸಹ್ಯವಾದ ಅಂಜೂರದ ಹಣ್ಣುಗಳು ತುಂಬಿದ್ದವು.</verse>
				<verse number="3">ಆಗ ಸರ್ವೇಶ್ವರ ನನ್ನನ್ನು, “ಯೆರೆಮೀಯನೇ, ನಿನಗೆ ಕಾಣುತ್ತಿರುವುದು ಏನು?” ಎಂದು ಕೇಳಿದರು. ನಾನು, “ಅಂಜೂರದ ಹಣ್ಣುಗಳನ್ನು ನೋಡುತ್ತಿದ್ದೇನೆ. ಒಳ್ಳೆಯ ಹಣ್ಣುಗಳು ಅತ್ತ್ಯುತ್ತಮವಾಗಿವೆ. ಕೆಟ್ಟ ಹಣ್ಣುಗಳು ಬಹಳ ಕೆಟ್ಟಿವೆ. ಯಾರೂ ತಿನ್ನಲಾಗದಷ್ಟು ಅಸಹ್ಯವಾಗಿವೆ,” ಎಂದು ಉತ್ತರಕೊಟ್ಟೆ.</verse>
				<verse number="4">ಆಗ ಸರ್ವೇಶ್ವರ ನನಗೆ ದಯಪಾಲಿಸಿದ ಸಂದೇಶ ಇದು:</verse>
				<verse number="5">“ಇಸ್ರಯೇಲರ ದೇವರಾದ ಸರ್ವೇಶ್ವರ ಹೇಳುವುದನ್ನು ಕೇಳು - ನಾನು ಈ ಸ್ಥಳದಿಂದ ಬಾಬಿಲೋನಿಗೆ ಕಳಿಸಿಬಿಟ್ಟು ಅಲ್ಲಿ ಸೆರೆಯಾಳುಗಳಾಗಿರುವ ಯೆಹೂದ್ಯರು ಈ ಉತ್ತಮವಾದ ಅಂಜೂರದ ಹಣ್ಣುಗಳಂಥವರು. ಅವರನ್ನು ಆದರದಿಂದ ನೋಡಿ ಅವರಿಗೆ ಒಳ್ಳೆಯದನ್ನೇ ಮಾಡುವೆನು.</verse>
				<verse number="6">ಅವರ ಮೇಲೆ ಕನಿಕರ ತೋರಿ ಕಟಾಕ್ಷಿಸಿ ಈ ನಾಡಿಗೆ ಮರಳಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡುವುದಿಲ್ಲ; ನೆಡುವೆನು, ಕೀಳುವುದಿಲ್ಲ.</verse>
				<verse number="7">ನಾನೇ ಸರ್ವೇಶ್ವರ ಎಂದು ಒಪ್ಪಿಕೊಳ್ಳುವ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು. ಅವರು ನನ್ನತ್ತ ಮನಪೂರ್ವಕವಾಗಿ ಹಿಂದಿರುಗಿ ಬರುವರು.</verse>
				<verse number="8">“ಇದಲ್ಲದೆ ಸರ್ವೇಶ್ವರನಾದ ನಾನು ಹೇಳುವುದು ಇದು: ಜುದೇಯದ ಅರಸ ಚಿದ್ಕೀಯನು, ಅವನ ಪ್ರಧಾನಿಗಳು, ಜೆರುಸಲೇಮಿನ ಜನರು ಶೇಷವಾಗಿ ಈ ನಾಡಿನಲ್ಲೆ ಉಳಿದವರು ಮತ್ತು ಈಜಿಪ್ಟ್ ದೇಶಕ್ಕೆ ವಲಸೆಹೋದವರು - ಇವರೆಲ್ಲರು ಕೆಟ್ಟು ಯಾರೂ ತಿನ್ನಲಾಗದಷ್ಟು ಅಸಹ್ಯವಾದ ಅಂಜೂರದ ಹಣ್ಣುಗಳಂಥವರು. ಅವರನ್ನು ಅಂಥ ಗತಿಗೆ ಇಳಿಸುವೆನು.</verse>
				<verse number="9">ಅವರ ಕೇಡಿಗಾಗಿ ನಾನು ಅವರನ್ನು ಜಗದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗುವ ಸ್ಥಳಗಳಲ್ಲೆಲ್ಲ ಅವರು ಕಟ್ಟುಗಾದೆಗೆ, ನಿಂದೆ ಪರಿಹಾಸ್ಯಕ್ಕೆ, ಶಾಪತಾಪಕ್ಕೆ ಗುರಿಯಾಗುವರು.</verse>
				<verse number="10">ಅವರಿಗೂ ಅವರ ಪೂರ್ವಜರಿಗೂ ನಾನು ಅನುಗ್ರಹಿಸಿದ ನಾಡಿನಿಂದ ಅವರು ನಿರ್ಮೂಲರಾಗುವ ತನಕ ಖಡ್ಗ, ಕ್ಷಾಮ, ವ್ಯಾಧಿಗಳನ್ನು ಅವರ ಮೇಲೆ ಕಳುಹಿಸುವೆನು.”</verse>
			</chapter>
			<chapter number="25">
				<verse number="1">ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಮೊದಲನೇ ವರ್ಷದಲ್ಲಿ ಅಂದರೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಆಳ್ವಿಕೆಯ ಮೊದಲನೇ ವರ್ಷದಲ್ಲಿ, ಪ್ರವಾದಿ ಯೆರೆಮೀಯನಿಗೆ ಯೆಹೂದ್ಯರೆಲ್ಲರ ವಿಷಯವಾಗಿ ದೈವೋಕ್ತಿಯೊಂದು ಉಂಟಾಯಿತು.</verse>
				<verse number="2">ಅದನ್ನು ಯೆರೆಮೀಯನು ಯೆಹೂದ್ಯರೆಲ್ಲರಿಗೂ ಸಮಸ್ತ ಜೆರುಸಲೇಮಿನವರಿಗೂ ಸಾರಿದನು;</verse>
				<verse number="3">“ಆಮೋನನ ಮಗನೂ ಜುದೇಯದ ಅರಸನೂ ಆದ ಯೋಷೀಯನ ಆಳ್ವಿಕೆಯ ಹದಿಮೂರನೇ ವರ್ಷದಿಂದ ಈ ದಿನದವರೆಗೆ, ಅಂದರೆ ಕಳೆದ ಇಪ್ಪತ್ತು ಮೂರು ವರ್ಷಗಳಿಂದ ಸರ್ವೇಶ್ವರ ಸ್ವಾಮಿ ತಮ್ಮ ವಾಕ್ಯವನ್ನು ನನಗೆ ತಿಳಿಸಿದ್ದಾರೆ. ಅದನ್ನು ನಾನು ನಿಮಗೆ ತಡಮಾಡದೆ ಪ್ರಕಟಿಸುತ್ತಾ ಬಂದಿದ್ದೇನೆ. ಆದರೆ ನೀವು ಅದಕ್ಕೆ ಕಿವಿಗೊಡಲಿಲ್ಲ.</verse>
				<verse number="4">ಸರ್ವೇಶ್ವರ ತಮ್ಮ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಿದ್ದರು. ಆದರೂ ನೀವು ಗಮನಿಸಲಿಲ್ಲ; ಕಿವಿಗೊಡಲೂ ಇಲ್ಲ.</verse>
				<verse number="5">ಅವರು ತಂದ ಸಮಾಚಾರ ಇದು: ‘ನೀವೆಲ್ಲರು ನಿಮ್ಮನಿಮ್ಮ ದುರ್ಮಾರ್ಗದಿಂದಲೂ ದುಷ್ಕೃತ್ಯಗಳಿಂದಲೂ ಹಿಂದಿರುಗಬೇಕು. ಆಗ, ಸರ್ವೇಶ್ವರ ನಿಮಗೂ ನಿಮ್ಮ ಪೂರ್ವಜರಿಗೂ ಶಾಶ್ವತ ಸೊತ್ತಾಗಿ ಅನುಗ್ರಹಿಸಿದ ನಾಡಿನಲ್ಲಿ ನೀವು ನೆಲೆಗೊಳ್ಳುವಿರಿ.</verse>
				<verse number="6">ಬೇರೆ ದೇವರುಗಳನ್ನು ಹಿಂಬಾಲಿಸಿ, ಅವರನ್ನು ಸೇವಿಸಿ ಪೂಜಿಸಬೇಡಿ. ನಿಮ್ಮ ಕೈ ಕೃತಿಗಳಾದ ವಿಗ್ರಹಗಳನ್ನು ಆರಾಧಿಸಿ, ನನ್ನನ್ನು ರೇಗಿಸಬೇಡಿ. ಆಗ ನಾನು ನಿಮಗೆ ಯಾವ ಕೇಡನ್ನೂ ಮಾಡೆನು.’</verse>
				<verse number="7">ಆದರೆ ಸರ್ವೇಶ್ವರ ಸ್ವಾಮಿಯೇ ಹೇಳುವಂತೆ ನೀವು ಅವರಿಗೆ ಕಿವಿಗೊಡದೆ ನಿಮ್ಮ ಕೈಕೃತಿಗಳಾದ ವಿಗ್ರಹಗಳಿಂದ ಅವರನ್ನು ಕೆಣಕಿ ನಿಮಗೇ ಕೇಡನ್ನು ತಂದುಕೊಂಡಿದ್ದೀರಿ.</verse>
				<verse number="8">“ಆದುದರಿಂದ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿಯ ಈ ನುಡಿಯನ್ನು ಕೇಳಿರಿ:</verse>
				<verse number="9">“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.</verse>
				<verse number="10">ಇವುಗಳಲ್ಲಿ ಸಂಭ್ರಮ ಸಡಗರಗಳ ಧ್ವನಿಯಾಗಲಿ. ವಧುವರರ ಸ್ವರವಾಗಲಿ ಏಳದಂತೆ ಮಾಡುವೆನು. ಬೀಸುಕಲ್ಲಿನ ಸದ್ದನ್ನು ಅಡಗಿಸುವೆನು. ದೀಪಕ್ಕೆ ಎಣ್ಣೆ ಇಲ್ಲದಂತೆ ಮಾಡುವೆನು.</verse>
				<verse number="11">ಈ ನಾಡೆಲ್ಲ ಹಾಳಾಗಿ ಇದನ್ನು ನೋಡುವವರು ನಿಬ್ಬೆರಗಾಗುವರು. ಇದರ ಜನರು ಎಪ್ಪತ್ತು ವರ್ಷ ಕಾಲ ಬಾಬಿಲೋನಿನ ಅರಸನಿಗೆ ಗುಲಾಮರಾಗಿ ಇರುವರು.</verse>
				<verse number="12">ಆ ಅವಧಿಯ ತರುವಾಯ ನಾನು ಬಾಬಿಲೋನನ್ನೂ ಅದರ ಅರಸನನ್ನೂ ದಂಡಿಸುವೆನು. ಅದರ ದ್ರೋಹದ ನಿಮಿತ್ತ ಆ ಬಾಬಿಲೋನಿನ ನಾಡನ್ನು ನಿತ್ಯ ವಿನಾಶಕ್ಕೆ ಗುರಿಪಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.</verse>
				<verse number="13">ನಾನು ಈ ನಾಡಿನ ವಿಷಯದಲ್ಲಿ ನುಡಿದುದೆಲ್ಲವನ್ನು, ಅಂದರೆ ಯೆರೆಮೀಯನ ಮುಖಾಂತರ ಸಕಲ ರಾಷ್ಟ್ರಗಳ ವಿರುದ್ಧ ನುಡಿದಿರುವ ಹಾಗು ಪ್ರವಾದನೆಗಳ ಗ್ರಂಥದಲ್ಲಿ ಬರೆದುದೆಲ್ಲವನ್ನು ಅದರ ಮೇಲೆ ಬರಮಾಡುವೆನು.</verse>
				<verse number="14">ಅನೇಕ ರಾಷ್ಟ್ರಗಳೂ ಮಹಾರಾಜರೂ ಅವರನ್ನು ಗುಲಾಮರನ್ನಾಗಿಸಿಕೊಳ್ಳುವರು. ಅವರ ಕೃತ್ಯಗಳಿಗೂ ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿ ತೀರಿಸುವೆನು.”</verse>
				<verse number="15">ಇಸ್ರಯೇಲರ ದೇವರಾದ ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು: “ಕೋಪವೆಂಬ ಮದ್ಯದಿಂದ ತುಂಬಿರುವ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊ. ಯಾವ ರಾಷ್ಟ್ರಗಳ ಬಳಿಗೆ ನಿನ್ನನ್ನು ಕಳಿಸುತ್ತೇನೋ ಆ ರಾಷ್ಟ್ರಗಳೆಲ್ಲ ಈ ಪಾತ್ರೆಯಿಂದ ಕುಡಿಯುವಂತೆ ಮಾಡು.</verse>
				<verse number="16">ಅವರು ಅದನ್ನು ಕುಡಿದು ಓಲಾಡುವರು, ನಾನು ಕಳಿಸುವ ಖಡ್ಗದಿಂದ ಹುಚ್ಚುಚ್ಚಾಗುವರು.”</verse>
				<verse number="17">ನಾನು ಸರ್ವೇಶ್ವರನ ಕೈಯಿಂದ ಆ ಪಾತ್ರೆಯನ್ನು ತೆಗೆದುಕೊಂಡೆ. ಸರ್ವೇಶ್ವರ ಯಾವ ರಾಷ್ಟ್ರಗಳ ಬಳಿಗೆ ನನ್ನನ್ನು ಕಳಿಸಿದರೋ, ಆ ಎಲ್ಲ ರಾಷ್ಟ್ರಗಳು ಅದರಿಂದ ಕುಡಿಯುವಂತೆ ಮಾಡಿದೆ.</verse>
				<verse number="18">ಜೆರುಸಲೇಮಿಗೂ ಜುದೇಯದ ನಗರಗಳಿಗೂ, ಅರಸರುಗಳಿಗೂ ಕುಡಿಸಿದೆ. ಇದರಿಂದ ಅವರು ಹಾಳಾಗಿ ಇಂದು ಪರಿಹಾಸ್ಯಕ್ಕೂ ಶಾಪಕ್ಕೂ ಗುರಿಯಾಗುವಂತಾಯಿತು.</verse>
				<verse number="19">ಆ ಕೊಡದಿಂದ ಕುಡಿದ ಮತ್ತಿತರರು ಇವರು: ಈಜಿಪ್ಟಿನ ಅರಸ ಫರೋಹನು ಅವನ ಸೇವಕರು, ಮಂತ್ರಿಗಳು, ಎಲ್ಲ ಪ್ರಜೆಗಳು ಮತ್ತು ಅಲ್ಲಿನ ವಿದೇಶೀಯರು;</verse>
				<verse number="20">ಊಚ್ ನಾಡಿನ ಎಲ್ಲ ಅರಸರು, ಫಿಲಿಷ್ಟಿಯ ದೇಶದ ಎಲ್ಲ ಅರಸರು, ಅಷ್ಕೆಲೋನ್, ಗಾಜಾ, ಎಕ್ರೋನ್, ಅಷ್ಟೋದಿನ ಶೇಷ, ಈ ಪ್ರಾಂತ್ಯಗಳ ಎಲ್ಲ ಅರಸರು;</verse>
				<verse number="21">ಎದೋಮ್, ಮೋವಾಬ್, ಅಮ್ಮೋನ್ ಜನರೆಲ್ಲರು;</verse>
				<verse number="22">ಟೈರ್ ಮತ್ತು ಸಿದೋನ್ ಇವುಗಳ ಅರಸರೆಲ್ಲರು;</verse>
				<verse number="23">ಸಮುದ್ರದ ಆಚಿನ ಕರಾವಳಿಯ ಅರಸರು, ದೆದಾನ್ಯರು, ತೇಮಾ, ಬೂಜ್ ನಾಡಿನವರು, ಮುಂದಲೆಗೂದಲು ಕತ್ತರಿಸಿಕೊಳ್ಳುವವರೆಲ್ಲರು;</verse>
				<verse number="24">ಅರಬೀಯದ ಎಲ್ಲ ಅರಸರು, ಅರಣ್ಯವಾಸಿಗಳಾದ ಮಿಶ್ರಜಾತಿಯ ಎಲ್ಲ ನಾಯಕರು;</verse>
				<verse number="25">ಏಲಾಮಿನ ಎಲ್ಲ ಅರಸರು, ಮೇದ್ಯರ ಎಲ್ಲ ಅರಸರು;</verse>
				<verse number="26">ದೂರ - ಹತ್ತಿರವಿರುವ ಉತ್ತರ ನಾಡಿನ ಎಲ್ಲ ಅರಸರು, ಲೋಕದ ಸಕಲ ರಾಜ್ಯಗಳು, ಇವರೆಲ್ಲರು ಕುಡಿದ ಮೇಲೆ ಬಾಬಿಲೋನಿನ ಅರಸನು ಕುಡಿಯುವನು.</verse>
				<verse number="27">ಸರ್ವೇಶ್ವರಾ: “ನೀನು ಅವರಿಗೆ ಹೀಗೆಂದು ಹೇಳು: ‘ಇಸ್ರಯೇಲಿನ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೇಳಿದ್ದಾರೆ - ನೀವು ಕುಡಿಯಬೇಕು, ಕುಡಿದು ಕಕ್ಕಬೇಕು. ನಾನು ಕಳಿಸುವ ಖಡ್ಗಕ್ಕೆ ತುತ್ತಾಗಿ ಬೀಳಬೇಕು, ಬಿದ್ದು ಏಳಬಾರದು.’</verse>
				<verse number="28">ಒಂದು ವೇಳೆ ಅವರು ಆ ಪಾತ್ರೆಯನ್ನು ನಿನ್ನ ಕೈಯಿಂದ ತೆಗೆದುಕೊಳ್ಳಲಿಕ್ಕೂ ಕುಡಿಯಲಿಕ್ಕೂ ಒಪ್ಪದಿದ್ದರೆ ಅವರಿಗೆ ಹೀಗೆಂದು ಹೇಳು - ‘ಸರ್ವಶಕ್ತ ಸರ್ವೇಶ್ವರನ ನುಡಿ ಇವು: ನೀವು ಕುಡಿಯಲೇಬೇಕು;</verse>
				<verse number="29">ಇಗೋ, ನನ್ನ ಹೆಸರುಗೊಂಡಿರುವ ನಗರದಲ್ಲಿ ಬಾಧಿಸಲು ಪ್ರಾರಂಭಿಸುತ್ತೇನೆ. ನೀವು ಆ ದಂಡನೆಗೆ ತಪ್ಪಿಸಿಕೊಳ್ಳುವಿರೊ? ಆಗುವುದೇ ಇಲ್ಲ. ಏಕೆಂದರೆ ಭೂನಿವಾಸಿಗಳೆಲ್ಲರಿಗೆ ವಿರುದ್ಧವಾಗಿ ಖಡ್ಗವನ್ನು ಬರಮಾಡುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.’</verse>
				<verse number="30">“(ಯೆರೆಮೀಯನೇ), ನೀನು ಪ್ರವಾದಿಸುತ್ತಾ ಅವರಿಗೆ ಈ ಮಾತುಗಳನ್ನು ಹೇಳು: ‘ಸರ್ವೇಶ್ವರ ಗರ್ಜಿಸುವನು ಮೇಲಣಲೋಕದಿಂದ ದನಿಗೈವನು ತನ್ನ ಘನ ನಿವಾಸದಿಂದ ಗಟ್ಟಿಯಾಗಿ ಕೂಗುವನು ತನ್ನ ಹುಲ್ಲುಗಾವಲಿನ ಮಂದೆಯ ವಿರುದ್ಧ ಕೂಗಾಡುವನು ದ್ರಾಕ್ಷೆಯ ಹಣ್ಣನ್ನು ತುಳಿಯುವವರಂತೆ ಭೂನಿವಾಸಿಗಳೆಲ್ಲರು ಭಯಭ್ರಾಂತರಾಗುವಂತೆ.</verse>
				<verse number="31">ಆತನ ಶಬ್ದ ವ್ಯಾಪಿಸುವುದು ಭೂಮಿಯ ಕಟ್ಟಕಡೆಗೆ ಸರ್ವೇಶ್ವರನೆ ಆಪಾದನೆ ಹೊರಿಸುವನು ಜನಾಂಗಗಳ ಮೇಲೆ ನರಮಾನವರನ್ನೆಲ್ಲ ಗುರಿಮಾಡುವನು ತೀರ್ಪಿಗೆ ದುರುಳರನ್ನು ತುತ್ತಾಗಿಸುವನು ಕತ್ತಿಗೆ - ಇದು ಸರ್ವೇಶ್ವರನ ನುಡಿ’.”</verse>
				<verse number="32">ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: ‘ಹರಡುವುದು ಕೇಡು ಜನಾಂಗದಿಂದ ಜನಾಂಗಕ್ಕೆ ಏಳುವುದು ಚಂಡಮಾರುತ ಲೋಕದ ಕಟ್ಟಕಡೆಯಿಂದ’.”</verse>
				<verse number="33">ಆ ದಿನದಲ್ಲಿ ಸರ್ವೇಶ್ವರನಿಂದ ಹತರಾದವರು ಲೋಕದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ಬಿದ್ದಿರುವರು. ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಒಟ್ಟುಗೂಡಿಸರು, ಯಾರೂ ಹೂಣರು. ಭೂಮಿಯ ಮೇಲೆ ಗೊಬ್ಬರವಾಗಿ ಬಿದ್ದಿರುವರು.</verse>
				<verse number="34">‘ಕುರಿಗಾಹಿಗಳೇ, ಅರಚಿಗೋಳಾಡಿ ಮೇಷಪಾಲರೇ, ಬೂದಿಯಲ್ಲಿ ಬಿದ್ದು ಹೊರಳಾಡಿ. ನಿಮ್ಮನ್ನು ವಧಿಸುವ ಕಾಲ ಬಂದಿದೆ ನಾನು ನಿಮ್ಮನ್ನು ಭಂಗಪಡಿಸುವೆ. ನೀವು ಚೂರುಚೂರಾಗುವಿರಿ ಒಡೆದುಹೋದ ಅಂದವಾದ ಪಾತ್ರೆಯಂತೆ.</verse>
				<verse number="35">ಕುರಿಗಾಹಿಗಳು ಓಡಿಹೋಗುವುದಕ್ಕೆ ದಾರಿ ಸಿಕ್ಕದು ಮೇಷಪಾಲರು ತಲೆತಪ್ಪಿಸಿಕೊಳ್ಳಲಿಕ್ಕೆ ಆಸ್ಪದ ದೊರಕದು.</verse>
				<verse number="36">ಅಕಟಕಟಾ, ಕುರಿಗಾಹಿಗಳ ಕೂಗಾಟ ಮೇಷಪಾಲರ ಕಿರುಚಾಟ ಸರ್ವೇಶ್ವರನಿಂದಲೆ ಆ ಹುಲ್ಲುಗಾವಲಿನ ವಿನಾಶ!</verse>
				<verse number="37">ಆತನ ಕೋಪಾಗ್ನಿಯ ನಿಮಿತ್ತ ಹಾಯಾದ ಗೋಮಾಳಗಳ ಧ್ವಂಸ!</verse>
				<verse number="38">ಗುಹೆಬಿಟ್ಟು ಬಂದ ಸಿಂಹದಂತೆ ಬಂದಿರುವನಾತ. ಆತನ ಕೋಪಾಗ್ನಿಯ ನಿಮಿತ್ತ ತುಂಡರಿಸುವಾ ಖಡ್ಗದ ಪ್ರಯುಕ್ತ ಅವರ ನಾಡಾಗಿದೆ ಬೆಂಗಾಡು.</verse>
			</chapter>
			<chapter number="26">
				<verse number="1">ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಯೆರೆಮೀಯನಿಗೆ ಸರ್ವೇಶ್ವರ ಸ್ವಾಮಿಯಿಂದ ಈ ಅಪ್ಪಣೆ ಆಯಿತು;</verse>
				<verse number="2">“ನೀನು ನನ್ನ ದೇವಾಲಯದ ಪ್ರಾಕಾರದಲ್ಲಿ ನಿಂತು, ಆ ಮಂದಿರದಲ್ಲಿ ಆರಾಧಿಸುವುದಕ್ಕೆ ಬರುವ ಜುದೇಯದ ಎಲ್ಲ ಊರಿನವರಿಗೆ ನಾನು ಆಜ್ಞಾಪಿಸುವ ಮಾತುಗಳನ್ನೆಲ್ಲಾ ಹೇಳು, ಒಂದನ್ನೂ ಬಿಡಬೇಡ.</verse>
				<verse number="3">ಬಹುಶಃ ಅವರು ಕಿವಿಗೊಟ್ಟು ತಮ್ಮ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಹಾಗೆ ಮಾಡಿದ್ದೇ ಆದರೆ, ಅವರ ದುಷ್ಕೃತ್ಯಗಳಿಗೆ ದಂಡನೆಯನ್ನು ವಿಧಿಸಬೇಕೆಂದಿದ್ದ ನನ್ನ ಮನಸ್ಸನ್ನು ಬದಲಾಯಿಸಿಕೊಳ್ಳುವೆನು.</verse>
				<verse number="4">“ಅವರಿಗೆ ನೀನು ಹೇಳಬೇಕಾದುದು ಇದು: ‘ಸರ್ವೇಶ್ವರ ಹೀಗೆನ್ನುತ್ತಾರೆ - ನೀವು ನನಗೆ ಕಿವಿಗೊಡದೆ ಹೋದರೆ, ನಾನು ನಿಮ್ಮ ಮುಂದಿಟ್ಟಿರುವ ಧರ್ಮಶಾಸ್ತ್ರದ ಪ್ರಕಾರ ನಡೆಯದೆಹೋದರೆ,</verse>
				<verse number="5">ಹಾಗು ನೀವು ಕೇಳದಿದ್ದರೂ ನಿಮ್ಮ ಬಳಿಗೆ ನಾನು ಪದೇಪದೇ ಕಳಿಸುತ್ತಾ ಬಂದಿರುವ ನನ್ನ ದಾಸರಾದ ಪ್ರವಾದಿಗಳ ಮಾತುಗಳನ್ನೂ ಆಲಿಸದೆಹೋದರೆ,</verse>
				<verse number="6">ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.”</verse>
				<verse number="7">ಯೆರೆಮೀಯನು ಸರ್ವೇಶ್ವರನ ಆಲಯದಲ್ಲಿ ಹೀಗೆ ಸಾರುವುದನ್ನು ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಕೇಳಿದರು.</verse>
				<verse number="8">ಜನರಿಗೆ ತಿಳಿಸಬೇಕೆಂದು ಸರ್ವೇಶ್ವರ ಆಜ್ಞಾಪಿಸಿದ್ದನ್ನೆಲ್ಲ ಯೆರೆಮೀಯನು ನುಡಿದು ಮುಗಿಸಿದ ಮೇಲೆ ಯಾಜಕರೂ ಪ್ರವಾದಿಗಳೂ ಜನರೆಲ್ಲರೂ ಅವನನ್ನು ಸುತ್ತುಗಟ್ಟಿದರು.</verse>
				<verse number="9">“ನಿನಗೆ ಖಂಡಿತವಾಗಿ ಮರಣದಂಡನೆಯಾಗಬೇಕು. ನೀನು ‘ಈ ದೇವಾಲಯಕ್ಕೆ ಶಿಲೋವಿನ ಗತಿ ಬರುವುದು, ಈ ನಗರ ಪಾಳುಬಿದ್ದು ನಿರ್ಜನ ಪ್ರದೇಶವಾಗುವುದು,’ ಎಂದು ಸರ್ವೇಶ್ವರನ ಹೆಸರೆತ್ತಿ ಪ್ರವಾದನೆ ಮಾಡಿದ್ದೇಕೆ?” ಎಂದು ಕೂಗಾಡಿದರು. ಆಲಯದಲ್ಲಿದ್ದ ಯೆರೆಮೀಯನನ್ನು ಜನರ ಗುಂಪು ಮುತ್ತಿಕೊಂಡಿತು.</verse>
				<verse number="10">ಜುದೇಯದ ನಾಯಕರಿಗೂ ಈ ಸಮಾಚಾರ ಮುಟ್ಟಿತು. ಅವರು ಅರಮನೆಯಿಂದ ಧಾವಿಸಿಬಂದು ಸರ್ವೇಶ್ವರನಾಲಯದ ಹೊಸ ಬಾಗಿಲ ಬಳಿ ಆಸೀನರಾದರು.</verse>
				<verse number="11">ಯಾಜಕರೂ ಪ್ರವಾದಿಗಳೂ, “ಇವನು ಮರಣದಂಡನೆಗೆ ಪಾತ್ರನು; ನಗರಕ್ಕೆ ಅಹಿತವಾದುದನ್ನು ನುಡಿದಿದ್ದಾನೆ. ಇದನ್ನು ನೀವೇ ಕೇಳಿದ್ದೀರಿ,” ಎಂದು ನಾಯಕರಿಗೂ ಜನರೆಲ್ಲರಿಗೂ ದೂರು ಇತ್ತರು.</verse>
				<verse number="12">ಆಗ ಯೆರೆಮೀಯನು, “ನೀವು ಕೇಳಿದ ಮಾತುಗಳನ್ನೆಲ್ಲ, ಅಂದರೆ ಈ ದೇವಾಲಯಕ್ಕೂ ನಗರಕ್ಕೂ ವಿರುದ್ಧವಾದ ಮಾತುಗಳನ್ನು ನುಡಿಯಲು ನನ್ನನ್ನು ಕಳಿಸಿದವರು ಸರ್ವೇಶ್ವರನೇ.</verse>
				<verse number="13">ಇದೀಗಲೇ ನೀವು ನಿಮ್ಮ ಮಾರ್ಗಗಳನ್ನೂ ನಡತೆಗಳನ್ನೂ ತಿದ್ದುಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ಕಿವಿಗೊಡಿ. ಆಗ ನಿಮಗೆ ತಿಳಿಸಿದ ಕೇಡು ಒದಗದಂತೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.</verse>
				<verse number="14">ನಾನೋ ನಿಮ್ಮ ಕೈಯಲ್ಲಿದ್ದೇನೆ. ನಿಮಗೆ ಯಾವುದು ಒಳ್ಳೆಯದು, ಯಾವುದು ನ್ಯಾಯವಾದುದು ಎಂದು ತೋರುತ್ತದೆಯೋ ಅದನ್ನು ನನಗೆ ಮಾಡಿ.</verse>
				<verse number="15">ಆದರೆ ಒಂದು ವಿಷಯ ನಿಮಗೆ ಚೆನ್ನಾಗಿ ತಿಳಿದಿರಲಿ - ನೀವು ನನ್ನನ್ನು ಕೊಂದುಹಾಕಿದ್ದೇ ಆದರೆ, ನಿರ್ದೋಷಿಯ ರಕ್ತ ಸುರಿಸಿದ ಅಪರಾಧಕ್ಕೆ ನೀವೂ ಈ ನಗರವೂ ಇದರ ನಿವಾಸಿಗಳೂ ಗುರಿಯಾಗುವಿರಿ. ಏಕೆಂದರೆ ಈ ಮಾತುಗಳನ್ನೆಲ್ಲ ನಿಮ್ಮ ಕಿವಿಗೆ ಮುಟ್ಟಿಸುವಂತೆ ನನ್ನನ್ನು ಕಳಿಸಿದವರು ಸರ್ವೇಶ್ವರ ಎಂಬುದು ಸತ್ಯ,” ಎಂದು ಹೇಳಿದನು.</verse>
				<verse number="16">ಇದನ್ನು ಕೇಳಿದ ನಾಯಕರು ಮತ್ತು ಸಕಲ ಜನರು ಯಾಜಕ - ಪ್ರವಾದಿಗಳಿಗೆ, “ಇವನು ಮರಣದಂಡನೆಗೆ ಪಾತ್ರನಲ್ಲ. ಏಕೆಂದರೆ ನಮ್ಮ ದೇವರಾದ ಸರ್ವೇಶ್ವರನ ಹೆಸರಿನಲ್ಲೇ ಇದನ್ನು ನಮಗೆ ನುಡಿದಿದ್ದಾನೆ,” ಎಂದರು.</verse>
				<verse number="17">ತರುವಾಯ ನಾಡಿನ ಹಿರಿಯರಲ್ಲಿ ಕೆಲವರು ಎದ್ದು ನಿಂತು ನೆರೆದಿದ್ದ ಜನರನ್ನು ಉದ್ದೇಶಿಸಿ ಹೀಗೆಂದರು:</verse>
				<verse number="18">“ಜುದೇಯದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮಿಕಾಯನು ಯೆಹೂದ್ಯರೆಲ್ಲರಿಗೆ: ‘ಸೇನಾಧೀಶ್ವರ ಸರ್ವೇಶ್ವರನ ಮಾತನ್ನು ಕೇಳಿರಿ: ಸಿಯೋನ್ ನಗರವನ್ನು ಹೊಲದಂತೆ ಉಳಲಾಗುವುದು; ಜೆರುಸಲೇಮ್ ಹಾಳುದಿಬ್ಬಗಳಾಗಿ ಮಾರ್ಪಡುವುದು; ಸರ್ವೇಶ್ವರನ ಆಲಯವಿರುವ ಪರ್ವತ ಕಾಡುಗುಡ್ಡಗಳಂತಾಗುವುದು’ ಎಂದು ಸಾರಿದ.</verse>
				<verse number="19">ಆಗ ಜುದೇಯದ ಅರಸ ಹಿಜ್ಕೀಯನು ಮತ್ತು ಯೆಹೂದ್ಯರೆಲ್ಲರು, “ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಬದಲಿಗೆ ಆ ಅರಸ ಭಯಭಕ್ತಿಯಿಂದ ಸರ್ವೇಶ್ವರನ ದಯೆಯನ್ನು ಬೇಡಿಕೊಂಡ. ಆಗ ಸರ್ವೇಶ್ವರ ವಿಧಿಸಬೇಕೆಂದಿದ್ದ ದಂಡನೆಯನ್ನು ವಿಧಿಸದೆ ಮನಸ್ಸನ್ನು ಬದಲಾಯಿಸಿಕೊಂಡರಲ್ಲವೆ? ಇವನನ್ನು ಕೊಂದುಹಾಕುವುದರಿಂದ ನಾವು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿಕೊಳ್ಳುತ್ತೇವೆ,” ಎಂದರು.</verse>
				<verse number="20">ಸರ್ವೇಶ್ವರನ ಹೆಸರಿನಲ್ಲಿ ಪ್ರವಾದನೆ ಮಾಡುತ್ತಿದ್ದ ಮತ್ತೊಬ್ಬ ವ್ಯಕ್ತಿ ಇದ್ದ. ಅವನು ಕಿರ್ಯತ್‍ಯಾರೀಮ್ ಊರಿಗೆ ಸೇರಿದ ಶಮಾಯನ ಮಗ ಊರೀಯ ಎಂಬುವನು. ಯೆರೆಮೀಯನು ನುಡಿದಂತೆಯೇ ಈ ನಗರಕ್ಕೂ ಈ ನಾಡಿಗೂ ಅಹಿತವಾದುದನ್ನೆ ನುಡಿಯುತ್ತಿದ್ದ.</verse>
				<verse number="21">ಅರಸ ಯೆಹೋಯಾಕೀಮನು ಮತ್ತು ಅವನ ಎಲ್ಲ ವೀರಶೂರರು ಹಾಗು ನಾಯಕರು ಆ ಊರೀಯನ ಮಾತುಗಳನ್ನು ಕೇಳಿಸಿಕೊಂಡರು. ಕೂಡಲೆ ಅರಸ ಅವನನ್ನು ಕೊಂದುಹಾಕಲು ಮನಸ್ಸುಮಾಡಿದ. ಈ ಸುದ್ದಿಯನ್ನು ಕೇಳಿದ ಊರೀಯ ಭಯಪಟ್ಟು ಓಡಿಹೋಗಿ ಈಜಿಪ್ಟನ್ನು ಸೇರಿಕೊಂಡ.</verse>
				<verse number="22">ಆಗ ಅರಸ ಯೆಹೋಯಾಕೀಮನು ಅಕ್ಬೋರನ ಮಗ ಎಲ್ನಾಥಾನನನ್ನೂ ಕೆಲವು ಸಂಗಡಿಗರನ್ನೂ ಅಲ್ಲಿಗೆ ಕಳಿಸಿದ.</verse>
				<verse number="23">ಅವರು ಊರೀಯನನ್ನು ಈಜಿಪ್ಟಿನಿಂದ ಎಳೆದು ಅರಸ ಯೆಹೋಯಾಕೀಮನ ಬಳಿಗೆ ತಂದರು. ಅರಸ ಅವನನ್ನು ಕತ್ತಿಯಿಂದ ಕಡಿಸಿ, ಶವವನ್ನು ಜನಸಾಮಾನ್ಯರ ಸಮಾಧಿಗಳ ನಡುವೆ ಹೂಣಿಸಿದ.</verse>
				<verse number="24">ಇತ್ತ ಯಾಜಕರೂ ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು.</verse>
			</chapter>
			<chapter number="27">
				<verse number="1">ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಆರಂಭದಲ್ಲಿ ಸರ್ವೇಶ್ವರನಿಂದ ಯೆರೆಮೀಯನಿಗೆ ಈ ವಾಣಿಯಾಯಿತು:</verse>
				<verse number="2">“ಇದು ಸರ್ವೇಶ್ವರನ ನುಡಿ - ನೊಗವನ್ನೂ ಕಣ್ಣಿಗಳನ್ನೂ ಮಾಡಿ ನಿನ್ನ ಹೆಗಲಿಗೆ ಹಾಕಿಕೊ.</verse>
				<verse number="3">ಜುದೇಯದ ಅರಸ ಚಿದ್ಕೀಯನನ್ನು ನೋಡಲು ಜೆರುಸಲೇಮಿಗೆ ಬಂದಿರುವ ರಾಯಭಾರಿಗಳ ಮೂಲಕ ಎದೋಮಿನ ರಾಜ, ಮೋವಾಬಿನ ರಾಜ, ಅಮ್ಮೋನ್ಯ ರಾಜ, ಟೈರಿನ ರಾಜ, ಸಿದೋನಿನ ರಾಜ ಇವರುಗಳಿಗೆ ಒಂದು ಸಮಾಚಾರವನ್ನು ಕಳಿಸು.</verse>
				<verse number="4">ಅವರು ತಮ್ಮ ತಮ್ಮ ರಾಜರುಗಳಿಗೆ ಅದನ್ನು ತಿಳಿಸುವಂತೆ ಆಜ್ಞಾಪಿಸು. ಆ ಸಮಾಚಾರವೇನೆಂದರೆ - ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ಮಾತುಗಳಿವು; ನಿಮ್ಮ ರಾಜರುಗಳು ಅರಿಯಬೇಕಾದ ವಿಷಯವಿದು:</verse>
				<verse number="5">ನನ್ನ ಮಹಾಶಕ್ತಿಯಿಂದಲೂ ನೀಡುಗೈಯಿಂದಲೂ ಲೋಕವನ್ನೂ ಭೂಮಿಯನ್ನೂ ಅದರ ಮಾನವರನ್ನು ಮತ್ತು ಪ್ರಾಣಿಗಳನ್ನೂ ಸೃಷ್ಟಿಸಿದವನೂ ನಾನೇ. ಈ ನನ್ನ ಸೃಷ್ಟಿಯನ್ನು ನನಗೆ ಸರಿ ತೋಚಿದವನಿಗೆ ಕೊಡಬಲ್ಲೆ.</verse>
				<verse number="6">ಈಗ ಈ ನಾಡುಗಳನ್ನೆಲ್ಲ ಬಾಬಿಲೋನಿಯದ ಅರಸ ಹಾಗೂ ನನ್ನ ಸೇವಕನಾದ ನೆಬೂಕದ್ನೆಚ್ಚರನ ಕೈವಶಮಾಡಿದ್ದೇನೆ. ಅವನ ಸೇವೆಗಾಗಿ ಕಾಡುಮೃಗಗಳನ್ನೂ ಕೊಟ್ಟಿದ್ದೇನೆ.</verse>
				<verse number="7">ಅವನ ದೇಶಕ್ಕೆ ನಿಯಮಿತ ಕಾಲ ಬರುವತನಕ ಎಲ್ಲ ರಾಷ್ಟ್ರಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಇರಬೇಕು. ಆಮೇಲೆ ಅನೇಕ ರಾಷ್ಟ್ರಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.”</verse>
				<verse number="8">“ಆದರೆ ಯಾವುದಾದರು ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲುಕೊಡಲು ಒಪ್ಪದೆಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೆ ಅದನ್ನು ನಿರ್ಮೂಲಮಾಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.</verse>
				<verse number="9">“ನೀವು ಬಾಬಿಲೋನಿನ ಅರಸನಿಗೆ ಅಡಿಯಾಳುಗಳು ಆಗುವುದಿಲ್ಲ’ ಎಂದು ನಿಮಗೆ ನುಡಿಯುವ ನಿಮ್ಮ ಪ್ರವಾದಿಗಳು ಶಕುನದವರು, ಕನಸಿಗರು, ಕಣಿಯವರು, ಮಾಟಗಾರರು. ಅವರಿಗೆ ಕಿವಿಗೊಡಲೇಬೇಡಿ.</verse>
				<verse number="10">ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು; ನೀವು ದೇಶಭ್ರಷ್ಟರಾಗಿ ನಾಶವಾಗುವಿರಿ.</verse>
				<verse number="11">ಯಾವ ರಾಷ್ಟ್ರ ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನ ಅಡಿಯಾಳಾಗುವುದೋ ಆ ರಾಷ್ಟ್ರದವರನ್ನು ನಾನು ಅವರ ಸ್ವಂತ ನಾಡಿನಲ್ಲೆ ನೆಲೆಗೊಳಿಸುವೆನು; ಅವರು ಅಲ್ಲೆ ಉತ್ತು, ಬಿತ್ತು ವಾಸಮಾಡುವರು. ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.”</verse>
				<verse number="12">ಜುದೇಯದ ಅರಸನಾದ ಚಿದ್ಕೀಯನಿಗೂ ನಾನು ಅದೇ ಮಾತುಗಳನ್ನು ಹೇಳಿದೆ: “ನೀವು ಬಾಬಿಲೋನಿಯದ ಅರಸನ ನೊಗಕ್ಕೆ ಹೆಗಲು ಕೊಟ್ಟು ಅವನಿಗೂ ಅವನ ಜನರಿಗೂ ಅಡಿಯಾಳಾಗಬೇಕು. ಆಗ ಬದುಕುವಿರಿ.</verse>
				<verse number="13">ಬಾಬಿಲೋನಿಯದ ಅರಸನ ಅಡಿಯಾಳಾಗಲು ನಿರಾಕರಿಸಿದ ರಾಷ್ಟ್ರವು ಖಡ್ಗಕ್ಷಾಮವ್ಯಾಧಿಗಳಿಂದ ಸಾಯಬೇಕಾಗುವುದೆಂದು ಸರ್ವೇಶ್ವರನೇ ನುಡಿದಿದ್ದಾರೆ. ಅಂಥ ಗತಿ ನಿಮಗೂ ನಿಮ್ಮ ಪ್ರಜೆಗೂ ಏಕೆ ಬರಬೇಕು?</verse>
				<verse number="14">‘ನೀವು ಬಾಬಿಲೋನಿಯದ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.</verse>
				<verse number="15">ಅವರನ್ನು ನಾನು ಕಳಿಸಲಿಲ್ಲ; ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತ ಇದ್ದಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಹೊರದೂಡಬೇಕಾಗುವುದು, ನೀವು ನಾಶವಾಗುವಿರಿ, ಎಂದು ಸರ್ವೇಶ್ವರನೇ ನುಡಿದಿದ್ದಾರೆ.”</verse>
				<verse number="16">ಬಳಿಕ ನಾನು ಯಾಜಕರಿಗೂ ಈ ಜನರೆಲ್ಲರಿಗೂ ಹೀಗೆಂದು ಸಾರಿದೆ: “ಇಗೋ, ಕೇಳಿ ಸರ್ವೇಶ್ವರನ ನುಡಿ: ‘ದೇವಾಲಯದ ಉಪಕರಣಗಳನ್ನು ಬೇಗನೆ ಬಾಬಿಲೋನಿನಿಂದ ಹಿಂದಕ್ಕೆ ತರಲಾಗುವುದು’ ಎಂಬುದಾಗಿ ನಿಮಗೆ ಪ್ರವಾದಿಸುವವರ ಮಾತುಗಳನ್ನು ಕೇಳಬೇಡಿ, ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.</verse>
				<verse number="17">ಅವರಿಗೆ ನೀವು ಕಿವಿಗೊಡಲೇಬಾರದು. ಬಾಬಿಲೋನಿಯದ ಅರಸನಿಗೆ ಅಡಿಯಾಳಾಗಿರಿ. ಆಗ ಬದುಕುವಿರಿ. ಈ ನಗರವೇಕೆ ನಾಶವಾಗಬೇಕು?</verse>
				<verse number="18">ಅವರು ನಿಜವಾದ ಪ್ರವಾದಿಗಳಾಗಿದ್ದರೆ, ಸರ್ವೇಶ್ವರನ ವಾಕ್ಯ ಅವರಲ್ಲಿ ನೆಲೆಸಿದ್ದರೆ, ದೇವಾಲಯದಲ್ಲೂ ಜುದೇಯದ ಅರಸನ ಮನೆಯಲ್ಲೂ ಜೆರುಸಲೇಮಿನಲ್ಲೂ ಇನ್ನು ಉಳಿದಿರುವ ಉಪಕರಣಗಳು ಬಾಬಿಲೋನಿಗೆ ಹೋಗದಂತೆ ಸರ್ವಶಕ್ತ ಸರ್ವೇಶ್ವರನಿಗೆ ವಿಜ್ಞಾಪನೆಮಾಡಿ ಬೇಡಿಕೊಳ್ಳಲಿ.”</verse>
				<verse number="19">(ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಯೆಕೊನ್ಯನನ್ನು ಮತ್ತು ಜುದೇಯದ ಹಾಗು ಜೆರುಸಲೇಮಿನ ಎಲ್ಲ ಮಂತ್ರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದಾಗ ಕೆಲವು ಸಾಮಾನುಗಳನ್ನು, ಅಂದರೆ ಕಂಬಗಳು, ಕಂಚಿನ ಕಡಲು, ಪೀಠಗಳು, ನಗರದಲ್ಲಿ ಉಳಿದಿರುವ ಮತ್ತಿತರ ಉಪಕರಣಗಳು ಇವನ್ನು ತೆಗೆದುಕೊಂಡು ಹೋಗಲಿಲ್ಲ.)</verse>
				<verse number="20"></verse>
				<verse number="21">ದೇವಾಲಯದಲ್ಲೂ ಜುದೇಯದ ಅರಸನ ಮನೆಯಲ್ಲೂ ಜೆರುಸಲೇಮಿನಲ್ಲೂ ಉಳಿದಿರುವ ಈ ಉಪಕರಣಗಳ ವಿಷಯವಾಗಿ ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ:</verse>
				<verse number="22">“ಅವುಗಳನ್ನು ಬಾಬಿಲೋನಿಗೆ ಒಯ್ಯಲಾಗುವುದು. ನಾನು ಬಿಡಿಸುವ ತನಕ ಅವು ಅಲ್ಲೇ ಇರುವುವು. ಬಳಿಕ ನಾನು ಅವುಗಳನ್ನು ತಂದು ಈ ಸ್ಥಳಕ್ಕೆ ಸೇರಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”</verse>
			</chapter>
			<chapter number="28">
				<verse number="1">ಅದೇ ವರ್ಷದಲ್ಲಿ, ಅಂದರೆ ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯಲ್ಲಿ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನು ಹಾಗು ಗಿಬ್ಯೋನ್ ಊರಿನವನು ಆದ ಹನನ್ಯನು ಸರ್ವೇಶ್ವರನ ಆಲಯದೊಳಗೆ ಬಂದು ಯಾಜಕರ ಮತ್ತು ಸಕಲ ಜನರ ಮುಂದೆ ನಿಂತು ನನಗೆ ಹೀಗೆ ಹೇಳಿದ -</verse>
				<verse number="2">“ ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ ಇದು: ‘ಬಾಬಿಲೋನಿಯದ ಅರಸನು ಹೇರಿರುವ ನೊಗವನ್ನು ಮುರಿದುಬಿಟ್ಟಿದ್ದೇನೆ.</verse>
				<verse number="3">ಬಾಬಿಲೋನಿಯದ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ಬಾಬಿಲೋನಿಗೆ ಕೊಂಡು ಒಯ್ದ ಸರ್ವೇಶ್ವರನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು.</verse>
				<verse number="4">ಯೆಹೋಯಾಕೀಮನ ಮಗನೂ ಜುದೇಯದ ಅರಸನೂ ಆದ ಯೆಕೊನ್ಯನನ್ನು ಮತ್ತು ಬಾಬಿಲೋನಿಗೆ ಸೆರೆಹೋದ ಎಲ್ಲ ಯೆಹೂದ್ಯರನ್ನು ಈ ಸ್ಥಳಕ್ಕೆ ಮರಳಿ ಬರಮಾಡುವೆನು. ಇದು ಸರ್ವೇಶ್ವರನ ನುಡಿ.”</verse>
				<verse number="5">ಆಗ ಪ್ರವಾದಿ ಯೆರೆಮೀಯನು ಸರ್ವೇಶ್ವರನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲ ಜನರ ಎದುರಿನಲ್ಲೆ ಪ್ರವಾದಿ ಹನನ್ಯನಿಗೆ:</verse>
				<verse number="6">“ಆಮೆನ್! ಸರ್ವೇಶ್ವರ ಹಾಗೆಯೇ ಮಾಡಲಿ! ಸರ್ವೇಶ್ವರ ತಮ್ಮ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬಿಲೋನಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಲಿ. ನೀನು ನುಡಿದ ಮಾತುಗಳನ್ನು ನೆರವೇರಿಸಲಿ!</verse>
				<verse number="7">ಆದರೆ ನಾನು, ನಿನ್ನ ಮತ್ತು ಸಕಲ ಜನರ ಕಿವಿಗೆ ಬೀಳುವಂತೆ ನುಡಿಯುವ ಈ ಮಾತನ್ನು ಗಮನಿಸು:</verse>
				<verse number="8">ನನಗೂ ನಿನಗೂ ಹಿಂದೆ, ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ಆಪತ್ತು-ವಿಪತ್ತು, ಕಾಯಿಲೆ-ಕಷ್ಟ, ಇಂಥವುಗಳನ್ನು ಸಾರುತ್ತಿದ್ದರು.</verse>
				<verse number="9">ಹಿತಸಮಾಚಾರವನ್ನು ಸಾರುವ ಪ್ರವಾದಿಯೇ ಸರ್ವೇಶ್ವರನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೆ ತಿಳಿಯತಕ್ಕದ್ದು,” ಎಂದು ಹೇಳಿದನು.</verse>
				<verse number="10">ಆಗ ಪ್ರವಾದಿ ಹನನ್ಯನು ಪ್ರವಾದಿ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದುಹಾಕಿದನು.</verse>
				<verse number="11">ನೆರೆದಿದ್ದ ಜನರೆಲ್ಲರ ಮುಂದೆ, “ಸರ್ವೇಶ್ವರನೇ ಹೇಳಿದ್ದಾರೆ - ಇದೇ ಪ್ರಕಾರ, ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಹೊರಿಸಿರುವ ನೊಗವನ್ನು ಇನ್ನೆರಡು ವರ್ಷದೊಳಗೆ ಸಮಸ್ತ ರಾಷ್ಟ್ರಗಳ ಹೆಗಲಿನಿಂದ ತೆಗೆದು ಮುರಿದು ಹಾಕಲಾಗುವುದು,” ಎಂದು ಹೇಳಿದನು. ಇದನ್ನು ಕೇಳಿದ ಪ್ರವಾದಿ ಯೆರೆಮೀಯನು ಅಲ್ಲಿಂದ ಹೊರಟುಹೋದನು.</verse>
				<verse number="12">ಹೀಗೆ ಪ್ರವಾದಿ ಹನನ್ಯನು ಪ್ರವಾದಿ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು, ಮುರಿದುಹಾಕಿದ ಮೇಲೆ ಸರ್ವೇಶ್ವರ ಯೆರೆಮೀಯನಿಗೆ ಹೀಗೆಂದರು:</verse>
				<verse number="13">“ ನೀನು ಹೋಗಿ ಹನನ್ಯನಿಗೆ: ‘ಸರ್ವೇಶ್ವರ ಇಂತೆನ್ನುತ್ತಾರೆ - ನೀನು ಮರದ ನೊಗಗಳನ್ನು ಮುರಿದುಬಿಟ್ಟಿರುವೆ. ಅವುಗಳಿಗೆ ಬದಲಾಗಿ ಕಬ್ಬಿಣದ ನೊಗಗಳನ್ನು ಮಾಡು.</verse>
				<verse number="14">ಏಕೆಂದರೆ ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ಮಾತಿವು: ಈ ಎಲ್ಲ ರಾಷ್ಟ್ರಗಳು ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನಿಗೆ ಸೇವೆಮಾಡಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ. ಅವು ಅವನಿಗೆ ಸೇವೆ ಸಲ್ಲಿಸೇತೀರಬೇಕು; ಕಾಡುಮೃಗಗಳು ಕೂಡ ಸೇವೆಸಲ್ಲಿಸುವಂತೆ ಅವನಿಗೆ ಅವುಗಳನ್ನು ಒಪ್ಪಿಸಿದ್ದೇನೆ, ಎಂದು ಹೇಳು.”</verse>
				<verse number="15">ಆಗ ಪ್ರವಾದಿ ಯೆರೆಮೀಯನು ಪ್ರವಾದಿ ಹನನ್ಯನಿಗೆ, “ಹನನ್ಯನೇ ಕೇಳು, ಸರ್ವೇಶ್ವರ ನಿನ್ನನ್ನು ಕಳಿಸಲಿಲ್ಲ. ಆದರೂ ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತಿರುವೆ.</verse>
				<verse number="16">ಆದಕಾರಣ ಸರ್ವೇಶ್ವರ ಇಂತೆನ್ನುತ್ತಾರೆ: ಇಗೋ, ನಾನು ನಿನ್ನನ್ನು ಈ ಜಗತ್ತಿನಿಂದ ತೊಲಗಿಸುವೆನು. ನೀನು ಸರ್ವೇಶ್ವರನಾದ ನನಗೆ ವಿರುದ್ಧವಾಗಿ ದ್ರೋಹದ ಮಾತುಗಳನ್ನು ಆಡಿದ್ದರಿಂದ ಇದೇ ವರ್ಷ ಸಾಯುವೆ,” ಎಂದು ಹೇಳಿದನು.</verse>
				<verse number="17">ಅಂತೆಯೇ ಹನನ್ಯನು ಅದೇ ವರ್ಷದ ಏಳನೆಯ ತಿಂಗಳಲ್ಲಿ ಸತ್ತುಹೋದನು.</verse>
			</chapter>
			<chapter number="29">
				<verse number="1">ಜೆರುಸಲೇಮಿನಿಂದ ಬಾಬಿಲೋನಿಗೆ ನೆಬೂಕದ್ನೆಚ್ಚರನು ಸೆರೆ ಒಯ್ದಿದ್ದ ಹಿರಿಯರಿಗೂ ಯಾಜಕರಿಗೂ ಪ್ರವಾದಿಗಳಿಗೂ ಸಕಲ ಜನರಿಗೂ ಪ್ರವಾದಿ ಯೆರೆಮೀಯನು ಜೆರುಸಲೇಮಿನಿಂದ ಒಂದು ಪತ್ರವನ್ನು ಬರೆದನು.</verse>
				<verse number="2">ಅರಸ ಯೆಕೋನ್ಯನು, ರಾಜಮಾತೆಯು, ಕಂಚುಕಿಗಳು, ಜುದೇಯದ ಮತ್ತು ಜೆರುಸಲೇಮಿನ ಪದಾಧಿಕಾರಿಗಳು, ಶಿಲ್ಪಿಗಳು, ಕಮ್ಮಾರರು, ಇವರೆಲ್ಲರು ಜೆರುಸಲೇಮನ್ನು ಬಿಟ್ಟುಹೋದ ಮೇಲೆ ಈ ಪತ್ರವನ್ನು ಬರೆದನು.</verse>
				<verse number="3">ಅದನ್ನು ಶಾಫಾನನ ಮಗ ಎಲ್ಲಾಸ, ಹಿಲ್ಕೀಯನ ಮಗ ಗೆಮರ್ಯ ಇವರ ಕೈಯಲ್ಲಿ ಕಳಿಸಿದನು. ಇವರು ಜುದೇಯದ ಅರಸ ಚಿದ್ಕೀಯನಿಂದ ಬಾಬಿಲೋನಿಗೆ ಅದರ ಅರಸ ನೆಬೂಕದ್ನೆಚ್ಚರನ ಬಳಿಗೆ ಕಳಿಸಲಾಗಿದ್ದ ರಾಯಭಾರಿಗಳು. ಆ ಪತ್ರದ ಮಾತುಗಳು ಇವು:</verse>
				<verse number="4">“ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಸ್ವಾಮಿ ಜೆರುಸಲೇಮಿನಿಂದ ಬಾಬಿಲೋನಿಗೆ ಸಾಗಿಸಲಾಗಿರುವ ಸೆರೆಯವರೆಲ್ಲರಿಗೆ ಹೀಗೆಂದು ತಿಳಿಸುತ್ತಾರೆ:</verse>
				<verse number="5">ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ. ತೋಟಗಳನ್ನು ಮಾಡಿಕೊಂಡು ಅವುಗಳ ಫಲಗಳನ್ನು ಅನುಭವಿಸಿರಿ.</verse>
				<verse number="6">ಸಂಸಾರಿಗಳಾಗಿ ಗಂಡು ಹೆಣ್ಣು ಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೆ ಹೆಣ್ಣುಗಳನ್ನು ತೆಗೆದುಕೊಳ್ಳಿ. ನಿಮ್ಮ ಹೆಣ್ಣುಗಳನ್ನು ಗಂಡುಗಳಿಗೆ ಕೊಡಿ. ಅವರೂ ಗಂಡುಹೆಣ್ಣು ಮಕ್ಕಳನ್ನು ಪಡೆಯಲಿ. ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕಡಿಮೆಯಾಗದಿರಿ.</verse>
				<verse number="7">ನಾನು ಯಾವ ನಗರಕ್ಕೆ ನಿಮ್ಮನ್ನು ಸಾಗಿಸಿದ್ದೇನೋ ಅದರ ಕ್ಷೇಮವನ್ನು ಹಾರೈಸಿ, ಅದಕ್ಕಾಗಿ ಸರ್ವೇಶ್ವರನಾದ ನನ್ನನ್ನು ಪ್ರಾರ್ಥಿಸಿರಿ. ಅದರ ಕ್ಷೇಮವೇ ನಿಮ್ಮ ಕ್ಷೇಮ.</verse>
				<verse number="8">ಇಸ್ರಯೇಲರ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಮಗೆ ಹೇಳುತ್ತೇನೆ: ನಿಮ್ಮ ಮಧ್ಯೆ ಇರುವ ಪ್ರವಾದಿಗಳಿಗೂ ಶಕುನದವರಿಗೂ ಕಿವಿಗೊಟ್ಟು ಮೋಸಹೋಗದಿರಿ. ನಿಮಗಾಗಿ ಕನಸುಕಂಡು ಹೇಳುವವರನ್ನು ನಂಬಬೇಡಿ.</verse>
				<verse number="9">ಅವರು ನನ್ನ ಹೆಸರಿನಲ್ಲಿ ನಿಮಗೆ ಸುಳ್ಳನ್ನೇ ಸಾರುತ್ತಾರೆ. ಅವರು ನನ್ನಿಂದ ಕಳಿಸಿದವರಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.</verse>
				<verse number="10">“ಸರ್ವೇಶ್ವರ ಹೀಗೆನ್ನುತ್ತಾರೆ: ‘ಬಾಬಿಲೋನಿನ ರಾಜ್ಯ ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಸಂಧಿಸಿ ಈ ಸ್ಥಳಕ್ಕೆ ಮರಳಿ ಬರಮಾಡುವೆನು. ಈ ಶುಭವಾಕ್ಯವನ್ನು ನಿಮ್ಮ ಮೇಲ್ಮೆಗಾಗಿ ನೆರವೇರಿಸುವೆನು.</verse>
				<verse number="11">ನಿಮಗೆ ಇಂಥ ಗತಿ ಬರಲಿ ಎಂದಲ್ಲ, ನಿರೀಕ್ಷೆ ಇರಲಿ ಎಂದೇ ನಾನು ನಿಮ್ಮ ವಿಷಯದಲ್ಲಿ ಮಾಡಿಕೊಂಡ ಆಲೋಚನೆಗಳನ್ನು ನಾನು ಮಾತ್ರ ಬಲ್ಲೆ. ಅವು ಅಹಿತ ಯೋಜನೆಗಳೇನೂ ಅಲ್ಲ, ಹಿತಕರವಾದ ಯೋಜನೆಗಳೇ.</verse>
				<verse number="12">ನೀವು ನನಗೆ ಮೊರೆಯಿಡುವಿರಿ, ನನ್ನನ್ನು ಪ್ರಾರ್ಥಿಸಲು ಬರುವಿರಿ; ನಾನು ಕಿವಿಗೊಡುವೆನು.</verse>
				<verse number="13">ನೀವು ನನ್ನನ್ನು ಹುಡುಕುವಿರಿ. ಮನಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.</verse>
				<verse number="14">ಹೌದು, ನಾನು ನಿಮಗೆ ದೊರೆಯುವೆನು. ನಿಮ್ಮನ್ನು ನಿಮ್ಮ ದುರವಸ್ಥೆಯಿಂದ ತಪ್ಪಿಸಿ, ನಿಮ್ಮನ್ನು ಅಟ್ಟಲಾಗಿದ್ದ ಸಮಸ್ತ ದೇಶಗಳಿಂದಲೂ ಸಕಲ ರಾಷ್ಟ್ರಗಳ ಮಧ್ಯೆಯಿಂದಲೂ ಒಟ್ಟುಗೂಡಿಸಿ, ನಿಮ್ಮನ್ನು ಯಾವ ಸ್ಥಳದಿಂದ ಸೆರೆಗೆ ಸಾಗಿಸಿದೆನೋ ಅಲ್ಲಿಗೆ ಮರಳಿ ಬರಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.’</verse>
				<verse number="15">“ನೀವೋ, ‘ಸರ್ವೇಶ್ವರ ನಮಗಾಗಿ ಬಾಬಿಲೋನಿನಲ್ಲೇ ಪ್ರವಾದಿಗಳನ್ನು ಏರ್ಪಡಿಸಿದ್ದಾರೆ’ ಎಂದುಕೊಂಡಿದ್ದೀರಿ.</verse>
				<verse number="16">ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ, ದಾವೀದನ ಸಿಂಹಾಸನವನ್ನು ಅಲಂಕರಿಸಿದ್ದ ಅರಸನ ವಿಷಯವಾಗಿ ಹಾಗೂ ನಿಮ್ಮೊಂದಿಗೆ ಸೆರೆಹೋಗದ ನಿಮ್ಮ ಸೋದರರೂ ಈ ನಗರದ ನಿವಾಸಿಗಳೂ ಆದವರ ವಿಷಯವಾಗಿ ಹೇಳಿರುವುದನ್ನು ಕೇಳಿ:</verse>
				<verse number="17">‘ಇಗೋ, ನಾನು ಅವರ ಮೇಲೆ ಖಡ್ಗ-ಕ್ಷಾಮ-ವ್ಯಾಧಿಗಳನ್ನು ಬರಮಾಡುವೆನು. ಯಾರೂ ತಿನ್ನಲಾಗದಷ್ಟು ಕೆಟ್ಟು ಅಸಹ್ಯವಾದ ಅಂಜೂರದ ಹಣ್ಣಿನ ಗತಿಗೆ ಅವರನ್ನು ಇಳಿಸುವೆನು.</verse>
				<verse number="18">ಖಡ್ಗ-ಕ್ಷಾಮ-ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗಿರುವ ಎಲ್ಲ ರಾಷ್ಟ್ರಗಳಲ್ಲಿ ಅವರು ಶಾಪ, ಪರಿಹಾಸ್ಯ, ದೂಷಣೆಗಳಿಗೆ ಗುರಿಯಾಗುವಂತೆ ಮಾಡುವೆನು.</verse>
				<verse number="19">ಏಕೆಂದರೆ ಅವರು ನನ್ನ ಮಾತುಗಳನ್ನು ಕೇಳದೆಹೋದರು. ನನ್ನ ದಾಸರಾದ ಪ್ರವಾದಿಗಳನ್ನು ಪದೇಪದೇ ಅವರ ಬಳಿಗೆ ಕಳಿಸಿದರೂ ಕೇಳಲೊಲ್ಲದೆ ಹೋದರು. ಇದು ಸರ್ವೇಶ್ವರನಾದ ನನ್ನ ನುಡಿ.</verse>
				<verse number="20">ಜೆರುಸಲೇಮಿನಿಂದ ಬಾಬಿಲೋನಿಗೆ ಸಾಗಿಸಲಾಗಿರುವ ಸೆರೆಯವರೇ, ನೀವೆಲ್ಲರು ಸರ್ವೇಶ್ವರನಾದ ನನ್ನ ವಾಕ್ಯಕ್ಕೆ ಕಿವಿಗೊಡಿ.’</verse>
				<verse number="21">“ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ತಮ್ಮ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗ ಅಹಾಬ ಮತ್ತು ಮಾಸೇಯನ ಮಗ ಚಿದ್ಕೀಯ ಇವರ ವಿಷಯವಾಗಿ ಹೀಗೆನ್ನುತ್ತಾರೆ: ‘ಇಗೋ ನಾನು ಇವರನ್ನು ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಕೈಗೆ ಬಿಡುವೆನು. ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.</verse>
				<verse number="22">ಇವರಿಗೆ ಒದಗಿದ ಗತಿಯನ್ನು ನೆನೆದು, ಬಾಬಿಲೋನಿಯದಲ್ಲಿ ಸೆರೆಯಾಗಿರುವ ಯೆಹೂದ್ಯರೆಲ್ಲರು ಯಾರನ್ನಾದರು ಶಪಿಸುವಾಗ, ‘ಬಾಬಿಲೋನಿಯದ ಅರಸ ಬೆಂಕಿಯಲ್ಲಿ ಸುಟ್ಟು ಭಸ್ಮಮಾಡಿದ ಚಿದ್ಕೀಯನ ಹಾಗು ಅಹಾಬನ ಗತಿಯನ್ನೆ ಸರ್ವೇಶ್ವರ ನಿನಗೂ ತರಲಿ’ ಎಂದು ಶಾಪಹಾಕುವರು.</verse>
				<verse number="23">ಏಕೆಂದರೆ ಇವರು ಇಸ್ರಯೇಲಿನಲ್ಲಿ ದುರಾಚಾರವನ್ನು ನಡೆಸಿದರು. ನೆರೆಯವರ ಹೆಂಡಿರಲ್ಲಿ ವ್ಯಭಿಚಾರಮಾಡಿದರು. ನಾನು ಆಜ್ಞಾಪಿಸಿದ ಮಾತುಗಳನ್ನು ನನ್ನ ಹೆಸರೆತ್ತಿಯೇ ಸುಳ್ಳಾಗಿ ಸಾರಿದರು. ಇದೆಲ್ಲ ನನಗೆ ಗೊತ್ತಿದೆ, ಇದಕ್ಕೆಲ್ಲಾ ನಾನೇ ಸಾಕ್ಷಿ’ ಎನ್ನುತ್ತಾರೆ ಸರ್ವೇಶ್ವರ.”</verse>
				<verse number="24">ನೆಹೆಲಾಮ್ಯನಾದ ಶೆಮಾಯನಿಗೆ ಹೀಗೆ ತಿಳಿಸಬೇಕೆಂದು ಸರ್ವೇಶ್ವರ ಯೆರೆಮೀಯನಿಗೆ ಅಪ್ಪಣೆಕೊಟ್ಟರು:</verse>
				<verse number="25">“ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ - ‘ನೀನು ಜೆರುಸಲೇಮಿನಲ್ಲಿರುವ ಜನರೆಲ್ಲರಿಗೂ ಯಾಜಕನಾದ ಮಾಸೇಯನ ಮಗ ಚೆಫನ್ಯನಿಗೂ ಸಮಸ್ತ ಯಾಜಕರಿಗೂ ನಿನ್ನ ಹೆಸರಿನಲ್ಲೆ ಪತ್ರ ಬರೆದು ಕಳಿಸಿರುವೆ. ಚೆಫನ್ಯನಿಗೆ ನೀನು ಹೀಗೆಂದು ಬರೆದಿರುವೆ:</verse>
				<verse number="26">‘ಸರ್ವೇಶ್ವರ ನಿನ್ನನ್ನು ಯೆಹೋಯಾದನ ಸ್ಥಾನದಲ್ಲಿ ದೇವಾಲಯದ ಯಾಜಕನನ್ನಾಗಿ ನೇಮಿಸಿದ್ದಾರೆ. ಯಾವನಾದರು ಮೈದುಂಬಿ ಪ್ರವಾದಿಯಾಗಿ ನಟಿಸಿದ್ದೇ ಆದರೆ ಅವನನ್ನು ಕೊಳಕ್ಕೆಹಾಕಿ, ಕೊರಳಿಗೆ ಕವೆಯೊಡ್ಡುವ ಅಧಿಕಾರವನ್ನು ನಿನಗೆ ವಹಿಸಿದ್ದಾರೆ.</verse>
				<verse number="27">ಹೀಗಿರುವಲ್ಲಿ, ನಿಮ್ಮ ಮಧ್ಯೆ ಪ್ರವಾದಿಯಾಗಿ ನಟಿಸುವ ಅನಾತೋತಿನವನಾದ ಯೆರೆಮೀಯನನ್ನು ನೀನು ಖಂಡಿಸಲಿಲ್ಲವೇಕೆ?</verse>
				<verse number="28">ಅವನು ಬಾಬಿಲೋನಿನಲ್ಲಿರುವ ನಮಗೆ ಪತ್ರ ಕಳಿಸಿ, ‘ಪರದೇಶವಾಸವು ನಿಮಗೆ ದೀರ್ಘವಾಗುವುದು, ನೀವು ಮನೆಗಳನ್ನು ಕಟ್ಟಿಕೊಂಡು ಅವುಗಳಲ್ಲಿ ವಾಸಿಸಿರಿ, ತೋಟಗಳನ್ನು ಮಾಡಿಕೊಂಡು ಫಲವನ್ನು ಅನುಭವಿಸಿರಿ’ ಎಂದು ತಿಳಿಸಿದ್ದಾನೆ.”</verse>
				<verse number="29">ಯಾಜಕನಾದ ಚೆಫನ್ಯನು ಈ ಪತ್ರವನ್ನು ನನ್ನ ಮುಂದೆ ಓದಿದನು.</verse>
				<verse number="30">“ಸರ್ವೇಶ್ವರ ನನಗೆ ಹೀಗೆಂದು ಅಪ್ಪಣೆ ಮಾಡಿದ್ದಾರೆ:</verse>
				<verse number="31">‘ಸೆರೆಯಲ್ಲಿ ಇರುವ ಎಲ್ಲರಿಗೆ ಹೀಗೆಂದು ಹೇಳಿಕಳಿಸು - ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಸರ್ವೇಶ್ವರ ಇಂತೆನ್ನುತ್ತಾರೆ: ನಾನು ಕಳಿಸದೆ ಇದ್ದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳನ್ನು ನಂಬುವಂತೆ ಮಾಡಿದ್ದಾನೆ.</verse>
				<verse number="32">ಈ ಕಾರಣ, ಇಗೋ, ನಾನು ಆ ನೆಹೆಲಾಮ್ಯನಾದ ಶೆಮಾಯನನ್ನು ಮತ್ತು ಅವನ ಸಂತತಿಯವರನ್ನು ದಂಡಿಸುವೆನು. ಈ ಜನರ ಮಧ್ಯೆ ಅವನಿಗೆ ಯಾವ ಸಂತಾನವೂ ಇರದು. ಜನರಿಗೆ ‘ನಾನು ಮಾಡಬೇಕೆಂದಿರುವ ಒಳಿತನ್ನು ಅವನು ನೋಡದೆಹೋಗುವನು. ಏಕೆಂದರೆ ಅವನು ನನಗೆ ವಿರುದ್ಧ ಪ್ರಚೋದನೆಯ ಮಾತನ್ನು ಆಡಿದ್ದಾನೆ. ಇದು ಸರ್ವೇಶ್ವರನಾದ ನನ್ನ ನುಡಿ’.”</verse>
			</chapter>
			<chapter number="30">
				<verse number="1">ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ಮತ್ತೊಮ್ಮೆ ಈ ಸಂದೇಶವನ್ನು ದಯಪಾಲಿಸಿದರು:</verse>
				<verse number="2">“ಇಸ್ರಯೇಲರ ದೇವರಾದ ಸರ್ವೇಶ್ವರ ಹೀಗೆನ್ನುತ್ತಾರೆ - ‘ನಾನು ನಿನಗೆ ಹೇಳಿರುವ ಮಾತುಗಳನ್ನೆಲ್ಲ ಗ್ರಂಥರೂಪವಾಗಿ ಬರೆ.</verse>
				<verse number="3">ಇಗೋ, ನಾನು ನನ್ನ ಪ್ರಜೆಯಾದ ಇಸ್ರಯೇಲರನ್ನೂ ಯೆಹೂದ್ಯರನ್ನೂ ಅವರ ದುರವಸ್ಥೆಯಿಂದ ಬಿಡುಗಡೆಮಾಡುವ ದಿನಗಳು ಬರುವುವು. ಆಗ ನಾನು ಅವರನ್ನು ಅವರ ಪೂರ್ವಜರಿಗೆ ಅನುಗ್ರಹಿಸಿದ ನಾಡಿಗೆ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಸರ್ವೇಶ್ವರನಾದ ನನ್ನ ನುಡಿ’.”</verse>
				<verse number="4">ಸರ್ವೇಶ್ವರ ಇಸ್ರಯೇಲಿನ ಮತ್ತು ಜುದೇಯದ ವಿಷಯವಾಗಿ ಈ ಮಾತುಗಳನ್ನು ಹೇಳಿದರು:</verse>
				<verse number="5">“ಸರ್ವೇಶ್ವರ ಹೀಗೆನ್ನುತ್ತಾರೆ: ಕೇಳಿಸಿದೆ ಭಯದಿಂದ ಕೂಡಿದ ಶಬ್ದ ಹೌದು, ಅದು ಕೂಡಿದೆ ಭೀತಿಯಿಂದ, ಶಾಂತಿಯಿಂದಲ್ಲ.</verse>
				<verse number="6">ಗಂಡಸು ಪ್ರಸವವೇದನೆ ಪಡುವುದುಂಟೆ, ಹೇಳು? ಆದರೂ ಪ್ರತಿಯೊಬ್ಬನು ಹೆರುವ ಮಹಿಳೆಯಂತೆ ಸೊಂಟ ಹಿಸಿಕಿಕೊಳ್ಳುವುದು ನನ್ನ ಕಣ್ಣಿಗೆ ಬೀಳುತ್ತಿದೆ ಏಕೆ? ಅವರ ಮುಖಗಳು ಬಿಳಿಚಿಕೊಂಡಿವೆ ಏಕೆ?</verse>
				<verse number="7">ಹೌದು, ಭಯಂಕರವಾದ ದಿನ ಬರಲಿದೆ, ಅದಕ್ಕಿರದು ಎಣೆ! ಅದು ಇಕ್ಕಟ್ಟಿನ ದಿನ, ಆದರೂ ಅದರಿಂದ ಯಕೋಬ್ಯರಿಗಿದೆ ಬಿಡುಗಡೆ.”</verse>
				<verse number="8">(ಸೇನಾಧೀಶ್ವರರಾದ ಸರ್ವೇಶ್ವರ ಹೇಳುವುದನ್ನು ಕೇಳು: “ಅವರ ಮೇಲೆ ಹೇರಲಾಗಿರುವ ನೊಗವನ್ನು ನಾನು ಆ ದಿನದಂದು ಮುರಿದುಬಿಡುವೆನು. ಕಣ್ಣಿಗಳನ್ನು ಕಿತ್ತುಹಾಕುವೆನು. ಅನ್ಯಕುಲದವರು ಇನ್ನು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳಲಾರರು.</verse>
				<verse number="9">ಅವರು ತಮ್ಮ ದೇವರಾದ ಸರ್ವೇಶ್ವರನೆಂಬ ನನಗೆ ಮತ್ತು ಅವರಿಗಾಗಿ ನಾನು ಏರ್ಪಡಿಸಲಿರುವ ರಾಜ ದಾವೀದನಿಗೆ ಸೇವೆಸಲ್ಲಿಸುವರು.)</verse>
				<verse number="10">“ನನ್ನ ದಾಸ ಯಕೋಬನೇ, ಅಂಜಬೇಡ! ಇಸ್ರಯೇಲೇ, ಭಯಪಡಬೇಡ” ಎನ್ನುತ್ತಾರೆ ಸರ್ವೇಶ್ವರ. “ದೂರ ನಾಡಿನಿಂದ ನಿನ್ನನ್ನು ಮುಕ್ತನನ್ನಾಗಿಸುವೆನು ನಿನ್ನ ಸಂತಾನ ಸೆರೆಹೋದ ಸೀಮೆಯಿಂದ ನಿನ್ನನ್ನು ಉದ್ಧರಿಸುವೆನು. ಹಿಂದಿರುಗಿ, ಹಾಯಾಗಿ ನೆಮ್ಮದಿಯಿಂದಿರುವುದು ಯಕೋಬು ಯಾರಿಂದಲೂ ಅದನ್ನು ಹೆದರಿಸಲಾಗದು.</verse>
				<verse number="11">ನಿನ್ನನ್ನು ರಕ್ಷಿಸಲು ನಿನ್ನೊಂದಿಗೆ ನಾನಿರುವೆನು ನಿನ್ನನ್ನು ಯಾವ ರಾಷ್ಟ್ರಗಳಿಗೆ ಅಟ್ಟಿ ಚದರಿಸಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನು ನಿರ್ಮೂಲ ಮಾಡೆನು, ಮಿತಿಮೀರಿ ಶಿಕ್ಷಿಸೆನು; ಆದರೆ ಶಿಕ್ಷಿಸದೆ ಮಾತ್ರ ಬಿಡೆನು - ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="12">ಹೌದು, ಸರ್ವೇಶ್ವರ ಹೀಗೆನ್ನುತ್ತಾರೆ: “ನಿನ್ನ ಗಾಯಗಳು ಗುಣಹೊಂದವು ನಿನ್ನ ಹುಣ್ಣನ್ನು ವಾಸಿಮಾಡಲಾಗದು.</verse>
				<verse number="13">ನಿನ್ನ ಪರ ವಾದಿಸುವವರಿಲ್ಲ, ನಿನ್ನ ವ್ರಣಕ್ಕೆ ಔಷಧವಿಲ್ಲ ನಿನ್ನನ್ನು ಆರೈಕೆ ಮಾಡುವವರಿಲ್ಲ.</verse>
				<verse number="14">ನಿನ್ನ ನಲ್ಲರೆಲ್ಲರು ಮರೆತುಬಿಟ್ಟರು, ನಿನ್ನನ್ನು ಹುಡುಕದಿರುವರು ಶತ್ರುವಿನಂತೆ ನಿನ್ನನ್ನು ಥಳಿಸಿದೆನು, ಕ್ರೂರವಾಗಿ ದಂಡಿಸಿದೆನು. ಏಕೆಂದರೆ, ನಿನ್ನ ಅಪರಾಧ ಹೆಚ್ಚಿದೆ ನಿನ್ನ ಪಾಪಗಳು ಲೆಕ್ಕವಿಲ್ಲದಿವೆ.</verse>
				<verse number="15">‘ಅಯ್ಯೋ ನೋವು ನಿಲ್ಲದಿದೆ,’ ಎಂದು ನಿನ್ನ ಗಾಯಕ್ಕಾಗಿ ಗೋಳಿಡುತ್ತಿರುವೆ ಏಕೆ? ನಿನ್ನ ಅಪರಾಧ ಹೆಚ್ಚಿದೆ, ಪಾಪಗಳು ಬಹಳವಿವೆ ಎಂದೇ ಇದನ್ನೆಲ್ಲ ನಿನಗೆ ಮಾಡಿದೆ.</verse>
				<verse number="16">ಆದರೂ ನಿನ್ನನ್ನು ಕಬಳಿಸುವವರನ್ನು ಕಬಳಿಸಲಾಗುವುದು ನಿನ್ನ ಶತ್ರುಗಳೆಲ್ಲ ತಪ್ಪದೆ ಸೆರೆಹೋಗುವರು ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು ನಿನ್ನನ್ನು ಕೊಳ್ಳೆಹೊಡೆಯುವವರು ಕೊಳ್ಳೆಗೆ ಈಡಾಗುವರು.</verse>
				<verse number="17">‘ಇಗೋ, ಸಿಯೋನ್ ಯಾರಿಗೂ ಬೇಡವಾದವಳು, ಭ್ರಷ್ಟಳಾದಳು’ ಎಂದು ಜನರು ನಿನ್ನನ್ನು ಜರೆವುದು ನನಗೆ ಹಿಡಿಸದು ನಿನ್ನನ್ನು ಗುಣಪಡಿಸುವೆನು ನಿನ್ನ ಗಾಯಗಳನ್ನು ವಾಸಿಮಾಡುವೆನು - ಇದು ಸರ್ವೇಶ್ವರನಾದ ನನ್ನ ನುಡಿ.</verse>
				<verse number="18">ಯಕೋಬನ ಮನೆಗಳ ದುರವಸ್ಥೆಯನ್ನು ತಪ್ಪಿಸುವೆನು ಜೆರುಸಲೇಮಿನ ನಿವಾಸಗಳನ್ನು ನಿಶ್ಚಯವಾಗಿ ಕರುಣಿಸುವೆನು. ಅದರ ಹಾಳುದಿಬ್ಬಗಳ ಮೇಲೆ ಹೊಸನಗರ ಕಟ್ಟುವೆನು ಅದರ ಅರಮನೆ ಮೊದಲಿದ್ದ ಸ್ಥಳದಲ್ಲೆ ನೆಲೆಯಾಗಿ ನಿಲ್ಲುವುದು.</verse>
				<verse number="19">ಅವುಗಳಿಂದ ಸ್ತುತಿಸ್ತೋತ್ರ ಕೇಳಿಬರುವುದು ಅಲ್ಲಿಂದ ನಲಿವುನಾದ ಕೇಳಿಸುವುದು. ಆ ಜನರನ್ನು ಹೆಚ್ಚಿಸುವೆನು, ಅವರು ಕೊಂಚವಾಗಿರರು. ಅವರನ್ನು ಘನಪಡಿಸುವೆನು, ಅವರು ಹೀನರಾಗಿರರು.</verse>
				<verse number="20">ಅವನ ಸಂತಾನ ಹಿಂದಿನ ಸುಸ್ಥಿತಿಯನ್ನು ಹೊಂದುವುದು ಅವರ ಸಮಾಜ ನನ್ನ ಮುಂದೆ ನೆಲೆಯಾಗಿ ನಿಲ್ಲುವುದು ಅವರನ್ನು ಬಾಧಿಸುವವರನ್ನೆಲ್ಲ ನಾನು ದಂಡಿಸುವೆನು.</verse>
				<verse number="21">ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗುವನು ಅವರ ವಂಶದವನೇ ಅವರನ್ನು ಆಳುವನು. ಅವನನ್ನು ನಾನು ನನ್ನ ಹತ್ತಿರ ಬರಗೊಡಿಸುವೆನು ಅವನು ನನ್ನ ಸನ್ನಿಧಾನಕ್ಕೆ ಸೇರುವನು. ಇಲ್ಲದಿದ್ದಲ್ಲಿ, ನನ್ನನು ಸಮೀಪಿಸಲು ಧೈರ್ಯಗೊಳ್ಳುವವನಾರು? - ಇದು ಸರ್ವೇಶ್ವರನಾದ ನನ್ನ ನುಡಿ.</verse>
				<verse number="22">ನೀವು ನನಗೆ ಪ್ರಜೆಯಾಗಿರುವಿರಿ ನಾನು ನಿಮಗೆ ದೇವರಾಗಿರುವೆನು.</verse>
				<verse number="23">ಇಗೋ, ಹೊರಟಿದೆ ಬಡಿದುಕೊಂಡು ಹೋಗುವ ಗಾಳಿ ಸರ್ವೇಶ್ವರನ ರೋಷವೆಂಬ ಬಿರುಗಾಳಿ ದುರುಳರ ತಲೆಯ ಮೇಲೆ ಬಡಿದೋಡುವ ಸುಂಟರ ಗಾಳಿ!</verse>
				<verse number="24">ಆತನ ಮನದಾಲೋಚನೆಗಳನ್ನು ನಡೆಸಿ ನೆರವೇರಿಸುವ ತನಕ ಹಿಂದಿರುಗದು ಆತನ ರೋಷವೆಂಬಾ ಬಿರುಗಾಳಿ, ಇದನ್ನು ನೀವು ಗ್ರಹಿಸುವಿರಿ ಕಟ್ಟಕಡೆಯ ದಿನಗಳಲ್ಲಿ.</verse>
			</chapter>
			<chapter number="31">
				<verse number="1">ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಕಾಲ ಬರಲಿದೆ, ಆಗ ಇಸ್ರಯೇಲಿನ ಸಕಲ ಗೋತ್ರಗಳಿಗೆ ನಾನೇ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.</verse>
				<verse number="2">ಇದು ಸರ್ವೇಶ್ವರನಾದ ನನ್ನ ನುಡಿ. ಅಳಿದುಳಿದಾ ಜನಕ್ಕೆ ಅರಣ್ಯದಲ್ಲಿ ದಯೆ ದೊರೆಯಿತು. ಇಸ್ರಯೇಲ್ ಶಾಂತಿಯನ್ನು ಅರಸುತ್ತಾ ಹೋಗುವಾಗ</verse>
				<verse number="3">ಸರ್ವೇಶ್ವರನಾದ ನಾನು ದೂರದಿಂದ ಅದಕ್ಕೆ ದರ್ಶನಕೊಟ್ಟು: ‘ನಾನು ನಿನ್ನನ್ನು ಪ್ರೀತಿಸುವುದು ಶಾಶ್ವತ ಪ್ರೇಮದಿಂದ. ಈ ಕಾರಣದಿಂದ ನಿನ್ನನ್ನು ಆಕರ್ಷಿಸಿಕೊಂಡಿದ್ದೇನೆ ಅಚಲ ಪ್ರೇಮದಿಂದ.</verse>
				<verse number="4">ಇಸ್ರಯೇಲೆಂಬ ಯುವತಿಯೇ, ನಿನ್ನ ಪಾಳುಬಿದ್ದ ಪ್ರದೇಶಗಳನ್ನು ನಾನು ಪುನಃ ಕಟ್ಟುವೆನು, ಅವು ಕಟ್ಟಡಗಳಿಂದ ಕೂಡಿರುವುವು. ನೀನು, ಮತ್ತೆ ತಾಳಮೇಳಗಳನ್ನು ತೆಗೆದುಕೊಂಡು ನಲಿದಾಡುವವರ ನಾಟ್ಯಗಳಲ್ಲಿ ಭಾಗವಹಿಸುವೆ.</verse>
				<verse number="5">ಸಮಾರಿಯದ ಗುಡ್ಡಗಳಲ್ಲಿ ಮರಳಿ ದ್ರಾಕ್ಷಾತೋಟಗಳನ್ನು ಮಾಡಿಕೊಳ್ಳುವೆ. ನೆಡುವವರೇ ನೆಟ್ಟ ಫಲಗಳನ್ನು ಸವಿಯುವರು.</verse>
				<verse number="6">ಹೌದು, ದಿನ ಬರುವುದು. ಆಗ ಕಾವಲುಗಾರರು ಎಫ್ರಯಿಮಿನ ಗುಡ್ಡಗಳ ಮೇಲೆ ನಿಂತು, ‘ಎದ್ದೇಳಿ, ಹೋಗೋಣ. ಬನ್ನಿ ಸಿಯೋನಿಗೆ, ನಮ್ಮ ದೇವರಾದ ಸರ್ವೇಶ್ವರನ ಸನ್ನಿಧಾನಕ್ಕೆ’ ಎಂದು ಕೂಗಿ ಕರೆ ನೀಡುವರು.”</verse>
				<verse number="7">ಸರ್ವೇಶ್ವರ ಹೀಗೆನ್ನುತ್ತಾರೆ: “ಯಕೋಬನನ್ನು ಕುರಿತು ಹರ್ಷಧ್ವನಿಗೈಯಿರಿ ಜನಾಂಗಗಳಾ ಶಿರೋಮಣಿಗೆ ಜೈಕಾರಮಾಡಿರಿ. ‘ಸರ್ವೇಶ್ವರ ಆಳಿದುಳಿದಾ ಇಸ್ರಯೇಲರನ್ನು ರಕ್ಷಿಸಿಹನು’ ಎಂದು ಘೋಷಿಸುತ್ತಾ ಸ್ತುತಿಸಿರಿ.</verse>
				<verse number="8">ಇಗೋ ನೋಡು, ಅವರನ್ನು ಬರಮಾಡುವೆನು ಉತ್ತರದೇಶದಿಂದ ಅವರನ್ನು ಒಂದುಗೂಡಿಸುವೆನು ದಿಗಂತಗಳಿಂದ. ಅವರೊಡನೆ ಕುರುಡರನ್ನೂ ಕುಂಟರನ್ನೂ ಗರ್ಭಿಣಿಯರನ್ನೂ ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.</verse>
				<verse number="9">ಕಣ್ಣೀರಿಡುತ್ತಾ ಹೋದವರು ಹಿಂದಿರುಗಿ ಬರುವರು. ಪ್ರಾರ್ಥಿಸುತ್ತಾ ಅವರು ಮುನ್ನಡೆಯುವಂತೆ ಮಾಡುವೆನು ಎಡವಲಾಗದ ಸಮಮಾರ್ಗದಲ್ಲಿ ಅವರನ್ನು ನಡೆಸುವೆನು ತುಂಬಿದ ತೊರೆಯ ಬಳಿಗೆ ಬರಮಾಡುವೆನು.</verse>
				<verse number="10">ರಾಷ್ಟ್ರಗಳೇ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ: ದೂರದ ದ್ವೀಪಗಳಲ್ಲೂ ಅದನ್ನು ಸಾರಿರಿ: ಇಸ್ರಯೇಲರನ್ನು ಚದುರಿಸಿದಾತ ಕುರಿಮಂದೆಯನ್ನು ಕಾಯುವ ಕುರುಬನಂತೆ ಅವರನ್ನು ಕೂಡಿಸಿ ಕಾಪಾಡುವನೆಂದು ಪ್ರಕಟಿಸಿರಿ.</verse>
				<verse number="11">ಸರ್ವೇಶ್ವರ ಯಕೋಬರ ವಿಮೋಚಕ ಅವರನ್ನು ಅವರಿಗಿಂತ ಬಲಿಷ್ಠರ ಕೈಯಿಂದ ಬಿಡಿಸಿದಾತ.</verse>
				<verse number="12">ಅವರು ಬಂದು ಹಾಡುವರು ಸಿಯೋನ್ ಶಿಖರದಲ್ಲಿ ಬರುವರು ಪ್ರವಾಹ ಪ್ರವಾಹವಾಗಿ ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕುರಿ, ಕುರಿಮರಿ, ಸರ್ವೇಶ್ವರನ ಈ ವರದಾನಗಳನ್ನು ಅನುಭವಿಸಲಿಕ್ಕಾಗಿ. ಹದವಾಗಿ ನೀರುಹಾಯಿಸಿದ ಉದ್ಯಾನವನದಂತೆ ಅವರ ಜೀವನ ಇನ್ನು ಅವರಿಗಿರದು ವ್ಯಸನ.</verse>
				<verse number="13">ಆಗ ನಾಟ್ಯವಾಡಿ ನಲಿವಳು ಯುವತಿ ಹರ್ಷಿಸುವರು ಯುವಕರು ಮುದುಕರು ಜೊತೆಯಾಗಿ. ಅವರ ದುಃಖವನ್ನು ಸಂತೋಷವಾಗಿಸುವೆನು ವ್ಯಸನ ತೊರೆದು ಆನಂದಿಸುವಂತೆ ಅವರನ್ನು ಸಂತೈಸುವೆನು.</verse>
				<verse number="14">ಯಾಜಕರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸುವೆನು ನನ್ನ ಜನ ಸವಿಯುವರು ಯಥೇಚ್ಛವಾಗಿ ನನ್ನ ವರದಾನಗಳನ್ನು. ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="15">ಸರ್ವೇಶ್ವರ ಹೀಗೆನ್ನುತ್ತಾರೆ: “ಕೇಳಿಬರುತ್ತಿದೆ ರಾಮಾ ಊರಿನೊಳು ರೋದನ ಗೋಳಾಟ, ಅಘೋರ ಆಕ್ರಂದನ. ಕಳೆದುಕೊಂಡ ಮಕ್ಕಳಿಗಾಗಿ ಗೋಳಾಡುತ್ತಿಹಳು ರಾಖೇಲಳು ಇನ್ನಿಲ್ಲದ ಅವುಗಳಿಗಾಗಿ ಉಪಶಮನ ಒಲ್ಲೆನೆನುತಿಹಳು.”</verse>
				<verse number="16">ಸರ್ವೇಶ್ವರ ಹೀಗೆನ್ನುತ್ತಾರೆ: “ನಿಲ್ಲಿಸು ನಿನ್ನ ಗೋಳಾಟವನ್ನು ಒರಸು ನಿನ್ನ ಕಣ್ಗಳಿಂದ ನೀರನ್ನು. ನಿನ್ನ ಪ್ರಯಾಸ ಸಾರ್ಥಕವಾಗುವುದು ಶತ್ರುವಿನ ದೇಶದಿಂದ ನಿನ್ನ ಮಕ್ಕಳು ಹಿಂದಿರುಗುವರು. ಸರ್ವೇಶ್ವರನಾದ ನನ್ನ ನುಡಿ ಇದು.”</verse>
				<verse number="17">ಸರ್ವೇಶ್ವರ ಇಂತೆನ್ನುತ್ತಾರೆ: “ನಿನ್ನ ಭವಿಷ್ಯದ ಬಗ್ಗೆ ಭರವಸೆಯಿಂದಿರು ನಿನ್ನ ಮಕ್ಕಳು ಹಿಂದಿರುಗಿ ಸ್ವದೇಶ ಸೇರುವರು.</verse>
				<verse number="18">ಎಫ್ರಯಿಮಿನ ಈ ಪ್ರಲಾಪ ನನ್ನ ಕಿವಿಗೆ ಬಿದ್ದಿದೆ: ‘ನೀನು ನನಗೆ ಶಿಕ್ಷೆ ವಿಧಿಸಿದೆ ಪಳಗದ ಹೋರಿಯಂತೆ ನಾನು ಆ ಶಿಕ್ಷೆಯನ್ನು ಅನುಭವಿಸಿದೆ. ನೀನು ನನ್ನನ್ನು ತಿರುಗಿಸು, ನೀ ತಿರುಗಿಸಿದ ಹಾಗೆ ನಾನು ತಿರುಗುವೆ. ನೀನೆ ನನ್ನ ದೇವರಾದ ಸರ್ವೇಶ್ವರನಲ್ಲವೆ?</verse>
				<verse number="19">ತಿರುಗಿಸಲ್ಪಟ್ಟ ಮೇಲೆಯೆ ನಾನು ಪಶ್ಚಾತ್ತಾಪ ಪಟ್ಟೆ ತಿಳುವಳಿಕೆ ಹೊಂದಿದ ಮೇಲೆಯೆ ಕೆನ್ನೆಗೆ ಹಾಕಿಕೊಂಡೆ ನನ್ನ ಯೌವನ ನಡತೆ ನನಗೆ ಅವಮಾನದ ಹೊರೆ ಈ ಕಾರಣ ಲಜ್ಜೆಗೊಂಡೆ. ಹೌದು, ನಾಚಿಕೆಯಿಂದ ತಲೆತಗ್ಗಿಸಿದೆ’.”</verse>
				<verse number="20">ಸರ್ವೇಶ್ವರ ಹೀಗೆನ್ನುತ್ತಾರೆ: “ಎಫ್ರಯಿಮ್, ನನಗೆ ಪ್ರಿಯ ಪುತ್ರನಲ್ಲವೆ? ನನ್ನ ಮುದ್ದು ಮಗನಲ್ಲವೆ? ಅವನ ವಿರುದ್ಧ ನಾನು ಪದೇ ಪದೇ ಮಾತಾಡಿದ್ದರೂ ನನ್ನ ಜ್ಞಾಪಕಕ್ಕೆ ಬರುತ್ತಲೇ ಇರುತ್ತಾನೆ. ಅವನಿಗಾಗಿ ನನ್ನ ಕರುಳು ಮರುಗುತ್ತದೆ. ಅವನನ್ನು ನಿಶ್ಚಯವಾಗಿ ಕರುಣಿಸುವೆನು.”</verse>
				<verse number="21">“ದಾರಿತೋರುವ ಕಂಬಗಳನ್ನೂ ಕೈಮರಗಳನ್ನೂ ನಿಲ್ಲಿಸಿಕೊ ನೀನು ಯಾವ ಮಾರ್ಗವಾಗಿ ಹೋದೆಯೋ ಆ ಮಾರ್ಗವನ್ನು ನೆನಸಿಕೊ. ಇಸ್ರಯೇಲೆಂಬ ಯುವತಿಯೇ ಹಿಂದಿರುಗು ಈ ನಿನ್ನ ನಗರಕ್ಕೆ ಹಿಂದಿರುಗು.</verse>
				<verse number="22">“ನಂಬಿಕೆ ದ್ರೋಹಿಯಾದ ಕುವರಿಯೇ, ಎಂದಿನವರೆಗೆ ಅತ್ತಿತ್ತ ಅಲೆದಾಡುತ್ತಿರುವೆ? ಸರ್ವೇಶ್ವರನಾದ ನಾನು ಅಪೂರ್ವವಾದುದನ್ನು ಉಂಟಾಗಿಸಿರುವೆ: ಇಗೋ, ಸ್ತ್ರೀಯಾದವಳು ತನ್ನ ಪುರುಷನನ್ನು ಕಾಪಾಡುವಳು.”</verse>
				<verse number="23">ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರನ ನುಡಿ ಹೀಗಿದೆ: “ನಾನು ನನ್ನ ಜನರ ಗುಲಾಮಗಿರಿಯನ್ನು ನೀಗಿಸುವೆನು. ಆಗ, ‘ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಸರ್ವೇಶ್ವರ ನಿನ್ನನ್ನು ಆಶೀರ್ವದಿಸಲಿ’ ಎಂಬ ಮಾತು ಜುದೇಯ ನಾಡಿನಲ್ಲೂ ಅದರ ನಗರಗಳಲ್ಲೂ ಮತ್ತೆ ಕೇಳಿಬರುವುದು.</verse>
				<verse number="24">ಜುದೇಯದಲ್ಲೂ ಅದರ ನಗರಗಳಲ್ಲೂ ಜನರು ಒಂದುಗೂಡಿ ಬಾಳುವರು. ವ್ಯವಸಾಯಗಾರರು, ಮಂದೆ ಮೇಯಿಸುವವರು ಹಾಗೂ ಯೆಹೂದ್ಯರೆಲ್ಲರು ಒಟ್ಟಿಗೆ ವಾಸಿಸುವರು.</verse>
				<verse number="25">ಬಳಲಿ ಬೆಂಡಾದವರೆಲ್ಲರನ್ನು ತಣಿಸುವೆನು ಹಾಗೂ ತೃಪ್ತಿಪಡಿಸುವೆನು.”</verse>
				<verse number="26">‘ಆಗ ನಾನು ನೋಡಿದೆ ಎಚ್ಚೆತ್ತು ನನ್ನ ಕನಸು ನನಗೆ ಮನೋಹರವಾಗಿತ್ತು.’</verse>
				<verse number="27">“ಸರ್ವೇಶ್ವರನಾದ ನಾನು ನಿಮಗೆ ಹೇಳುವುದೇನೆಂದರೆ: ಇಗೋ, ಇಸ್ರಯೇಲ್ ಮತ್ತು ಜುದೇಯ ಕ್ಷೇತ್ರಗಳಲ್ಲಿ ನಾನು ಮನುಷ್ಯರನ್ನೂ ಪ್ರಾಣಿಗಳನ್ನೂ ಬಿತ್ತಿ ಭರ್ತಿಮಾಡುವ ದಿನಗಳು ಬರುವುವು.</verse>
				<verse number="28">ಅವರನ್ನು ಕೀಳಲು ಕೆಡವಲು, ಅಳಿಸಲು ಹಾಳುಮಾಡಲು, ಈ ಮೊದಲು ಎಚ್ಚರವಹಿಸಿದ ಹಾಗೆಯೆ ಇನ್ನು ಮುಂದೆ ಅವರನ್ನು ಕಟ್ಟಲು ಹಾಗು ನೆಡಲು ಎಚ್ಚರವಹಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.</verse>
				<verse number="29">ಆ ಕಾಲ ಬಂದಾಗ ಜನರು, ‘ಹೆತ್ತವರು ಹುಳಿದ್ರಾಕ್ಷೆಯನ್ನು ತಿಂದರು. ಆದರೆ ಮಕ್ಕಳ ಹಲ್ಲುಗಳು ಚಳಿತುಹೋದವು’ ಎಂದು ಹೇಳರು.</verse>
				<verse number="30">ಏಕೆಂದರೆ ಸಾಯತಕ್ಕವನು ತನ್ನ ಸ್ವಂತ ದೋಷಕ್ಕಾಗಿಯೇ ಸಾಯುವನು. ಹುಳಿದ್ರಾಕ್ಷೆಯನ್ನು ತಿಂದವನ ಹಲ್ಲೇ ಚಳಿತುಹೋಗುವುದು.”</verse>
				<verse number="31">ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ಇಸ್ರಯೇಲ್ ವಂಶದವರೊಂದಿಗೂ ಯೆಹೂದ ವಂಶದವರೊಂದಿಗೂ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವುವು.</verse>
				<verse number="32">ಈ ಒಡಂಬಡಿಕೆ, ನಾನು ಅವರ ಪೂರ್ವಜರನ್ನು ಕೈ ಹಿಡಿದು ಈಜಿಪ್ಟಿನಿಂದ ಕರೆದು ತಂದಾಗ ಅವರೊಡನೆ ಮಾಡಿಕೊಂಡ ಒಡಂಬಡಿಕೆ ಅಂಥದಾಗಿ ಇರುವುದಿಲ್ಲ. ನಾನು ಅವರಿಗೆ ಯಜಮಾನನಾಗಿ ಇದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿನಡೆದರು.</verse>
				<verse number="33">ಸರ್ವೇಶ್ವರನಾದ ನಾನು ಹೇಳುತ್ತೇನೆ ಕೇಳಿ: ಆ ದಿನಗಳು ಬಂದಮೇಲೆ ನಾನು ಇಸ್ರಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು - ನನ್ನ ಧರ್ಮಶಾಸ್ತ್ರವನ್ನು ಅವರ ಅಂತರಂಗದಲ್ಲಿ ಇಡುವೆನು. ಅವರ ಹೃದಯದ ಹಲಗೆಯ ಮೇಲೆ ಬರೆಯುವೆನು. ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.</verse>
				<verse number="34">ಒಬ್ಬನು ತನ್ನ ನೆರೆಹೊರೆಯವರನ್ನು ಕುರಿತು ಅಥವಾ ಅಣ್ಣತಮ್ಮಂದಿರನ್ನು ಕುರಿತು, ‘ಸರ್ವೇಶ್ವರನನ್ನು ಅರಿತುಕೊ’ ಎಂದು ಬೋಧಿಸಬೇಕಾಗಿರುವುದಿಲ್ಲ. ಚಿಕ್ಕವರಿಂದ ಮೊದಲ್ಗೊಂಡು ದೊಡ್ಡವರ ತನಕ ಎಲ್ಲರು ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅಪರಾಧವನ್ನು ಕ್ಷಮಿಸಿ, ಅವರ ಪಾಪವನ್ನು ಎಂದಿಗೂ ನೆನಪಿಗೆ ತಂದುಕೊಳ್ಳುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="35">ಸರ್ವೇಶ್ವರನು, ಹಗಲಲ್ಲಿ ಬೆಳಕು ನೀಡಲು ಸೂರ್ಯನನ್ನು ನೇಮಿಸಿದಾತ. ಇರುಳಲ್ಲಿ ಬೆಳಕು ನೀಡಲು ಚಂದ್ರ ನಕ್ಷತ್ರಗಳನ್ನು ಏರ್ಪಡಿಸಿದಾತ. ಅಲೆಗಳು ಭೋರ್ಗರೆವಷ್ಟು ಸಮುದ್ರವನ್ನು ಕೆರಳಿಸುವಾತ ‘ಸೇನಾಧೀಶ್ವರ ಸರ್ವೇಶ್ವರ’ ಎಂಬ ನಾಮಧೇಯದಿಂದ ಪ್ರಸಿದ್ಧನಾತ.</verse>
				<verse number="36">ಆತನ ಮಾತು ಇವು - ಈ ಪ್ರಕೃತಿ ನಿಯಮ ನನ್ನ ಪರಾಂಬರಿಕೆಯಲ್ಲಿ ಇರುವತನಕ ಒಂದು ರಾಷ್ಟ್ರವಾಗಿ ಉಳಿವುದು ಇಸ್ರಯೇಲ್ ಸಂತಾನ.</verse>
				<verse number="37">ಮೇಲಿನ ಆಕಾಶಮಂಡಲವನ್ನು ಅಳೆಯಬಹುದಾದರೆ ಕೆಳಗಿನ ಭೂಮಂಡಲದ ವಿಸ್ತಾರವನ್ನು ಪರೀಕ್ಷಿಸಬಹುದಾದರೆ ಆಗ ಮಾತ್ರ ಅದರ ದುಷ್ಕೃತ್ಯಗಳನ್ನು ಮುನ್ನಿಟ್ಟು ಇಸ್ರಯೇಲ್ ವಂಶವನ್ನು ನಾನು ನಿರಾಕರಿಸಿಬಿಡಲು ಸಾಧ್ಯ.</verse>
				<verse number="38">ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ಕಾಲ ಬರಲಿದೆ. ಆಗ ಸರ್ವೇಶ್ವರನಾದ ನನ್ನ ಮಹಿಮೆಗಾಗಿ ಈ ನಗರವನ್ನು ಹನನೇಲನ ಗೋಪುರದಿಂದ ಮೂಲೆ ಬಾಗಿಲವರೆಗೆ ವಿಸ್ತರಿಸಲಾಗುವುದು.</verse>
				<verse number="39">ಅದರ ಎಲ್ಲೆ ಇನ್ನು ಮೇಲೆ ಗಾರೇಬ್ ಗುಡ್ಡದತನಕ ನೆಟ್ಟಗೆ ಹೋಗಿ ಗೋಯದ ಕಡೆಗೆ ತಿರುಗುವುದು.</verse>
				<verse number="40">ಹೆಣ ಹೂಣುವ, ಬೂದಿ ತುಂಬುವ ಕಣಿವೆಯಿಂದ, ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ, ಇವುಗಳವರೆಗಿರುವ ಪ್ರದೇಶವೆಲ್ಲ ಸರ್ವೇಶ್ವರನಿಗೆ ಪರಿಶುದ್ಧ ಸ್ಥಾನವಾಗುವುದು. ಈ ನಗರ ಇನ್ನೆಂದಿಗೂ ನಿರ್ಮೂಲವಾಗದು, ನಾಶವಾಗದು.”</verse>
			</chapter>
			<chapter number="32">
				<verse number="1">ಜುದೇಯದ ಅರಸನಾದ ಚಿದ್ಕೀಯನ ಆಳ್ವಿಕೆಯ ಹತ್ತನೇ ವರ್ಷದಲ್ಲಿ, ಅಂದರೆ ನೆಬೂಕದ್ನೆಚ್ಚರನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ತಮ್ಮ ವಾಕ್ಯವನ್ನು ದಯಪಾಲಿಸಿದರು.</verse>
				<verse number="2">ಆ ಸಮಯದಲ್ಲಿ ಬಾಬಿಲೋನಿಯದ ಅರಸನ ಸೈನ್ಯ ಜೆರುಸಲೇಮನ್ನು ಮುತ್ತಿತ್ತು. ಪ್ರವಾದಿ ಯೆರೆಮೀಯನು ಜುದೇಯದ ರಾಜನ ಮನೆಗೆ ಸೇರಿದ ಕಾರಾಗೃಹದಲ್ಲಿ ಸೆರೆಯಾಗಿದ್ದನು.</verse>
				<verse number="3">ಜುದೇಯದ ಅರಸ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಸರ್ವೇಶ್ವರನೇ ಹೀಗೆಂದಿದ್ದಾರೆ: ನಾನು ಈ ನಗರವನ್ನು ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಸುವೆನು. ಅವನು ಇದನ್ನು ಆಕ್ರಮಿಸುವನು.</verse>
				<verse number="4">ಈ ಜುದೇಯದ ಅರಸ ಚಿದ್ಕೀಯನು ಬಾಬಿಲೋನಿಯರ ಕೈಯಿಂದ ತಪ್ಪಿಸಿಕೊಳ್ಳಲಾಗದೆ ಅದರ ಅರಸನ ವಶವಾಗುವುದು ಖಂಡಿತ. ಅವನ ಮುಂದೆ ಸಾಕ್ಷಾತ್ತಾಗಿ ನಿಂತು ಮುಖಾಮುಖಿಯಾಗಿ ಮಾತಾಡುವನು.</verse>
				<verse number="5">ಆ ಅರಸನು ಚಿದ್ಕೀಯನನ್ನು ಬಾಬಿಲೋನಿಗೆ ಕೊಂಡು ಒಯ್ಯುವನು. ನಾನು ಅವನಿಗೆ ದಯೆತೋರುವ ತನಕ ಅಲ್ಲೇ ಇರುವನು. ನೀವು ಬಾಬಿಲೋನಿಯರೊಡನೆ ಯುದ್ಧಮಾಡಿದರೂ ಜಯವಾಗದು. ಇದು ಸರ್ವೇಶ್ವರನ ನುಡಿ’ ಎಂದು ಹೇಳುತ್ತಿರುವೆ, ಏಕೆ?” ಎಂದು ಆಪಾದಿಸಿ ಸೆರೆಯಲ್ಲಿ ಇಟ್ಟಿದ್ದನು.</verse>
				<verse number="6">ಯೆರೆಮೀಯನು ಆಗ ತಿಳಿಸಿದ್ದು ಇದು: ಸರ್ವೇಶ್ವರನು ನನಗೆ ಈ ವಾಕ್ಯವನ್ನು ದಯಪಾಲಿಸಿದರು -</verse>
				<verse number="7">“ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನು ನಿನ್ನ ಬಳಿಗೆ ಬಂದು - ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೊ. ಪರರ ಪಾಲಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನಗಿದೆ,’ - ಎಂದು ಹೇಳುವನು.”</verse>
				<verse number="8">ಸರ್ವೇಶ್ವರನ ಈ ವಾಕ್ಯಾನುಸಾರ ನನ್ನ ಚಿಕ್ಕಪ್ಪನ ಮಗ ಹನಮೇಲನು ಕಾರಾಗೃಹದ ಅಂಗಳದಲ್ಲಿ ಇದ್ದ ನನ್ನ ಬಳಿಗೆ ಬಂದು, ‘ಬೆನ್ಯಾಮೀನ್ ನಾಡಿನ ಅನಾತೋತಿನಲ್ಲಿರುವ ನನ್ನ ಹೊಲವನ್ನು ದಯಮಾಡಿ ಕೊಂಡುಕೋ. ಅದಕ್ಕೆ ನೀನೆ ಬಾಧ್ಯನು, ನಿನಗಾಗಿಯೇ ಕೊಂಡುಕೊ’ ಎಂದು ಕೇಳಿಕೊಂಡನು. ಕೂಡಲೆ ಇದು ಸರ್ವೇಶ್ವರನ ನುಡಿ ಎಂದು ನನಗೆ ಗೊತ್ತಾಯಿತು.</verse>
				<verse number="9">ನನ್ನ ಚಿಕ್ಕಪ್ಪನ ಮಗ ಹನಮೇಲನಿಂದ ಅನಾತೋತಿನಲ್ಲಿರುವ ಆ ಹೊಲವನ್ನು ಕೊಂಡುಕೊಂಡೆ. ಅದರ ಕ್ರಯವಾಗಿ ಹದಿನೇಳು ತೊಲ ಬೆಳ್ಳಿಯನ್ನು ತೂಕಮಾಡಿ ಅವನಿಗೆ ಕೊಟ್ಟೆ.</verse>
				<verse number="10">ಪತ್ರಕ್ಕೆ ರುಜುಹಾಕಿ, ಮುದ್ರೆ ಒತ್ತಿ, ಸಾಕ್ಷಿಗಳನ್ನು ಹಾಕಿಸಿ, ತಕ್ಕಡಿಯಲ್ಲಿ ಆ ಬೆಳ್ಳಿಯನ್ನು ತೂಗಿ ಅವನಿಗೆ ಕೊಟ್ಟೆ.</verse>
				<verse number="11">ಆಮೇಲೆ ನಾನು ಕ್ರಯಪತ್ರವನ್ನು, ಅಂದರೆ ಚಕ್ಕುಬಂದಿ ಷರತ್ತುಗಳಿಂದ ಕೂಡಿ ಮುದ್ರಿತವಾದ ಪತ್ರವನ್ನೂ ಮುಚ್ಚಳಿಕೆಯ ಪತ್ರವನ್ನೂ ತೆಗೆದುಕೊಂಡು</verse>
				<verse number="12">ಮಹ್ಸೇಮನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆ. ನನ್ನ ಚಿಕ್ಕಪ್ಪನ ಮಗ ಹನಮೇಲನ ಮುಂದೆ ಕ್ರಯಪತ್ರಕ್ಕೆ ರುಜುಮಾಡಿದ ಸಾಕ್ಷಿಗಳ ಸಮಕ್ಷಮದಲ್ಲಿ, ಕಾರಾಗೃಹದ ಅಂಗಳದಲ್ಲಿ ಕುಳಿತಿದ್ದ ಎಲ್ಲ ಯೆಹೂದ್ಯರ ಎದುರಿನಲ್ಲಿ, ಆ ಕ್ರಯಪತ್ರವನ್ನು ಕೊಟ್ಟೆ.</verse>
				<verse number="13">ಅವರೆಲ್ಲರ ಮುಂದೆ ಬಾರೂಕನಿಗೆ,</verse>
				<verse number="14">“ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ: ನೀನು ಈ ಕ್ರಯಪತ್ರಗಳನ್ನು, ಅಂದರೆ ಮುದ್ರಿತಪತ್ರವನ್ನೂ ಮುಚ್ಚಳಿಕೆಯ ಪತ್ರವನ್ನೂ ತೆಗೆದುಕೊಂಡು ಒಂದು ಮಡಕೆಯಲ್ಲಿ ಬಚ್ಚಿಡು. ಅದು ಬಹಳ ದಿನ ಸುರಕ್ಷಿತವಾಗಿರಲಿ.</verse>
				<verse number="15">ಈ ನಾಡಿನಲ್ಲಿ ಜನರು ಮನೆ-ಹೊಲ-ತೋಟಗಳನ್ನು ಮತ್ತೆ ಕೊಳ್ಳುವರು ಹಾಗೂ ಕೊಡುವರು. ಇದು ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರನ ನುಡಿ,” ಎಂದು ಸ್ಪಷ್ಟವಾಗಿ ಹೇಳಿದೆ.</verse>
				<verse number="16">ಕ್ರಯಪತ್ರವನ್ನು ನೇರೀಯನ ಮಗ ಬಾರೂಕನ ಕೈಗೆ ಕೊಟ್ಟಮೇಲೆ ನಾನು ಸ್ವಾಮಿಗೆ ಹೀಗೆ ಪ್ರಾರ್ಥನೆಮಾಡಿದೆ:</verse>
				<verse number="17">“ಸ್ವಾಮಿ ಸರ್ವೇಶ್ವರಾ, ನೀವು ನಿಮ್ಮ ಭುಜಬಲದಿಂದಲೂ ಮಹಾಶಕ್ತಿಯಿಂದಲೂ ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದೀರಿ. ನಿಮಗೆ ಅಸಾಧ್ಯವಾದ ಕಾರ್ಯ ಯಾವುದೂ ಇಲ್ಲ.</verse>
				<verse number="18">ನೀವು ಸಾವಿರಾರು ತಲಾಂತರಗಳವರೆಗೂ ದಯೆತೋರುವವರು. ಆದರೆ ಹೆತ್ತವರ ದೋಷಫಲವನ್ನು ಅವರ ತರುವಾಯ ಮಕ್ಕಳ ಮಡಲಿಗೆ ಹಾಕುವವರು. ನೀವು ಮಹಾಪರಾಕ್ರಮಿಯಾದ ದೇವರು, ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ನಿಮ್ಮ ನಾಮಧೇಯ.</verse>
				<verse number="19">ನೀವು ಆಲೋಚನೆಯಲ್ಲಿ ಶ್ರೇಷ್ಟರು, ಕಾರ್ಯದಲ್ಲಿ ಸಮರ್ಥರು. ನರಮಾನವರ ಮಾರ್ಗಗಳನ್ನೆಲ್ಲ ಕಣ್ಣಾರೆ ನೋಡುವವರು. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೂ ನಡತೆಗೂ ತಕ್ಕ ಫಲಕೊಡುವವರು.</verse>
				<verse number="20">ಈಜಿಪ್ಟ್ ದೇಶದಲ್ಲಿ ಮಾಡಿದ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಇಸ್ರಯೇಲರಲ್ಲೂ ಇತರ ಜನಾಂಗಗಳಲ್ಲೂ ಈ ದಿನದವರೆಗೂ ಮಾಡಿ ಹೆಸರುವಾಸಿಯಾದವರು.</verse>
				<verse number="21">ಆ ಹೆಸರು ಈಗಲೂ ಸುಸ್ಥಿರವಾಗಿದೆ. ನೀವು ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ನಡೆಸಿ, ಭುಜಪರಾಕ್ರಮವನ್ನು ತೋರ್ಪಡಿಸಿ, ಶಿಕ್ಷಾಹಸ್ತವನ್ನೂ ಪ್ರಯೋಗಿಸಿ, ಮಹಾಭೀತಿಯನ್ನು ಉಂಟುಮಾಡಿ, ನಿಮ್ಮ ಜನರಾದ ಇಸ್ರಯೇಲರನ್ನು ಈಜಿಪ್ಟ್ ದೇಶದಿಂದ ಬರಮಾಡಿದಿರಿ.</verse>
				<verse number="22">ಅವರ ಪೂರ್ವಜರಿಗೆ ವಾಗ್ದಾನ ಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಈ ನಾಡನ್ನು ಅವರಿಗೆ ಅನುಗ್ರಹಿಸಿದಿರಿ.</verse>
				<verse number="23">ಅವರು ಈ ನಾಡನ್ನು ಸೇರಿದರು, ಅದನ್ನು ಅನುಭವಿಸಿದರು. ಆದರೆ ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ಧರ್ಮಶಾಸ್ತ್ರದ ಅನುಸಾರ ನಡೆಯಲಿಲ್ಲ. ನೀವು ಆಜ್ಞಾಪಿಸಿದವುಗಳಲ್ಲಿ ಒಂದನ್ನೂ ಮಾಡಲಿಲ್ಲ. ಆದಕಾರಣ ನೀವು ಈ ಕೇಡನ್ನೆಲ್ಲ ಅವರ ಮೇಲೆ ಬರಮಾಡಿದ್ದೀರಿ.</verse>
				<verse number="24">“ಇಗೋ, ಮುತ್ತಿಗೆಯ ದಿಬ್ಬಗಳು! ನಗರವನ್ನು ಆಕ್ರಮಿಸಲು ಬಂದುಬಿಟ್ಟಿದ್ದಾರೆ. ಖಡ್ಗ-ಕ್ಷಾಮ-ವ್ಯಾಧಿಗಳಿಂದ ನಗರವು ವಿರೋಧಿಗಳಾದ ಬಾಬಿಲೋನಿಯರ ಕೈ ಹಿಡಿತಕ್ಕೆ ಸಿಕ್ಕಿಹೋಗಿದೆ. ನೀವು ನುಡಿದಂತೆ ನೆರವೇರಿದೆ. ನಿಮ್ಮ ಕಣ್ಣಿಗೆ ಎಲ್ಲ ಬಟ್ಟಬಯಲಾಗಿದೆ.</verse>
				<verse number="25">ದೇವರಾದ ಸರ್ವೇಶ್ವರಾ, ಸಾಕ್ಷಿಗಳನ್ನು ಕರೆಯಿಸಿ, ಕ್ರಯಕೊಟ್ಟು ಹೊಲವನ್ನು ಕೊಂಡುಕೊ ಎಂದು ನೀವು ನನಗೆ ಆಜ್ಞಾಪಿಸಿದಿರಿ. ಆದರೆ ನೋಡಿ, ನಗರವು ಬಾಬಿಲೋನಿಯರ ಕೈವಶವಾಗಲಿದೆ.”</verse>
				<verse number="26">ಆಗ ಸರ್ವೇಶ್ವರ ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದರು:</verse>
				<verse number="27">“ನೋಡು, ನಾನು ಸರ್ವೇಶ್ವರ, ನರಪ್ರಾಣಿಗಳಿಗೆ ದೇವರು. ನನಗೆ ಅಸಾಧ್ಯವಾದುದು ಯಾವುದು?</verse>
				<verse number="28">ಆದಕಾರಣ, ಸರ್ವೇಶ್ವರನಾದ ನಾನು ಹೇಳುತ್ತೇನೆ, ಕೇಳು: ಈ ನಗರವನ್ನು ಕಸ್ದೀಯರ ವಶಕ್ಕೆ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸಲಿದ್ದೇನೆ. ಅವನು ಇದನ್ನು ಆಕ್ರಮಿಸುವನು.</verse>
				<verse number="29">ಈ ನಗರಕ್ಕೆ ಮುತ್ತಿಗೆಹಾಕಲಿರುವ ಬಾಬಿಲೋನಿಯರು ಇದರೊಳಗೆ ನುಗ್ಗಿ ಬೆಂಕಿಯಿಕ್ಕುವರು. ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳ್‍ದೇವತೆಗೆ ಧೂಪಾರತಿ ಎತ್ತಿದ್ದಾರೋ, ಅನ್ಯದೇವರುಗಳಿಗೆ ಪಾನನೈವೇದ್ಯಗಳನ್ನು ಅರ್ಪಿಸಿದ್ದಾರೋ, ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ನಗರವನ್ನು ಸುಟ್ಟುಬಿಡುವರು.</verse>
				<verse number="30">ಇಸ್ರಯೇಲ್ ವಂಶವೂ ಯೆಹೂದ ವಂಶವೂ ಚಿಕ್ಕಂದಿನಿಂದ ನನ್ನ ಚಿತ್ತಕ್ಕೆ ವಿರುದ್ಧವಾಗಿಯೇ ನಡೆಯುತ್ತಾ ಬಂದಿದೆ. ಹೌದು, ಇಸ್ರಯೇಲ್ ವಂಶದವರು ತಮ್ಮ ಕೈಕೆಲಸದ ವಿಗ್ರಹಗಳಿಂದ ನನ್ನನ್ನು ರೇಗಿಸುತ್ತಲೇ ಬಂದಿದ್ದಾರೆ. ಇದು ಸರ್ವೇಶ್ವರನಾದ ನನ್ನ ನುಡಿ.</verse>
				<verse number="31">ಈ ನಗರವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪತಾಪಗಳಿಗೆ ಕಾರಣವಾಗಿದೆ.</verse>
				<verse number="32">ಅದರ ಅರಸರು, ಮಂತ್ರಿಗಳು, ಯಾಜಕರು, ಪ್ರವಾದಿಗಳು, ಜುದೇಯದ ಪ್ರಜೆಗಳು, ಜೆರುಸಲೇಮಿನ ನಿವಾಸಿಗಳು, ಹೀಗೆ ಎಲ್ಲ ಇಸ್ರಯೇಲರೂ ಯೆಹೂದ್ಯರೂ ಅಧರ್ಮವನ್ನು ಹೇರಳವಾಗಿಮಾಡಿ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ಈ ನಗರವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂದಿದೆ.</verse>
				<verse number="33">ಅವರು ನನಗೆ ಅಭಿಮುಖರಾಗದೆ ಬೆನ್ನುಮಾಡಿದ್ದಾರೆ. ನಾನು ಅವರಿಗೆ ಎಡೆಬಿಡದೆ ಬೋಧಿಸುತ್ತಾ ಬಂದರೂ ನನ್ನ ಉಪದೇಶವನ್ನು ಅಂಗೀಕರಿಸಲಿಲ್ಲ, ನನಗೆ ಕಿವಿಗೊಡಲೂ ಇಲ್ಲ.</verse>
				<verse number="34">ನನ್ನ ಹೆಸರಿನಿಂದ ಪ್ರಖ್ಯಾತವಾಗಿರುವ ದೇವಾಲಯದಲ್ಲಿ ತಮ್ಮ ಅಸಹ್ಯ ವಸ್ತುಗಳನ್ನು ಇಟ್ಟು ಹೊಲೆಮಾಡಿದ್ದಾರೆ.</verse>
				<verse number="35">ತಮ್ಮ ಗಂಡುಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗೆ ಆಹುತಿಕೊಡುವುದಕ್ಕಾಗಿ ಬೆನ್‍ಹಿನ್ನೋಮ್ ಕಣಿವೆಯಲ್ಲಿ ಬಾಳ್‍ದೇವತೆಗೆ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಹೀಗೆ ಯೆಹೂದ ಕುಲವನ್ನೆ ಪಾಪಕ್ಕೆ ಸಿಕ್ಕಿಸಿದ್ದಾರೆ. ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ. ಅದರ ಯೋಚನೆಕೂಡ ನನ್ನ ಮನಸ್ಸಿನಲ್ಲಿ ಸುಳಿಯಲಿಲ್ಲ.”</verse>
				<verse number="36">“ಖಡ್ಗ-ಕ್ಷಾಮ-ವ್ಯಾಧಿ ಇವುಗಳಿಂದ ಈ ನಗರವು ಬಾಬಿಲೋನಿನ ಅರಸನ ಕೈ ಹಿಡಿತಕ್ಕೆ ಸಿಕ್ಕಲಿದೆ ಎಂದು ನೀವು ಹೇಳುವ ವಿಷಯದಲ್ಲಿ ಇಸ್ರಯೇಲರ ದೇವರಾದ ಸರ್ವೇಶ್ವರ ಈಗ ಇಂತೆನ್ನುತ್ತಾರೆ:</verse>
				<verse number="37">‘ಇಗೋ, ನಾನು ಕಡುಕೋಪದಿಂದಲೂ ರೋಷಾವೇಶದಿಂದಲೂ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಎಲ್ಲ ದೇಶಗಳಿಂದ ಈ ಸ್ಥಳಕ್ಕೆ ಮರಳಿ ಕರೆತಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.</verse>
				<verse number="38">ಅವರು ನನಗೆ ಪ್ರಜೆಯಾಗಿರುವರು. ನಾನು ಅವರಿಗೆ ದೇವರಾಗಿರುವೆನು.</verse>
				<verse number="39">ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.</verse>
				<verse number="40">ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು.</verse>
				<verse number="41">ಅವರಿಗೆ ಒಳಿತನ್ನು ಮಾಡುವುದರಲ್ಲಿ ಸಂತೋಷಿಸುವೆನು.</verse>
				<verse number="42">“ಸರ್ವೇಶ್ವರನಾದ ನನ್ನ ಮಾತು ಇವು: ಇಂಥ ಕಠಿಣವಾದ ಕಷ್ಟದುಃಖಗಳನ್ನು ಈ ಜನರ ಮೇಲೆ ಬರಮಾಡಿದಂತೆಯೇ ನಾನು ಇವರಿಗೆ ವಾಗ್ದಾನಮಾಡಿದ ಎಲ್ಲ ಒಳಿತನ್ನೂ ಬರಮಾಡುವೆನು.</verse>
				<verse number="43">ಜನರಿಲ್ಲದೆ, ಪ್ರಾಣಿಗಳಿಲ್ಲದೆ, ಪಾಳುಬಿದ್ದು ಬಾಬಿಲೋನಿಯರ ಕೈವಶವಾಗಿದೆ ಎನ್ನಲಾಗುವ ಈ ನಾಡಿನಲ್ಲಿ ಹೊಲಗದ್ದೆಗಳ ವ್ಯವಹಾರ ನಡೆಯುವುದು.</verse>
				<verse number="44">ಬೆನ್ಯಾಮಿನ್ ನಾಡು, ಜೆರುಸಲೇಮಿನ ಸುತ್ತಮುತ್ತಣ ಪ್ರದೇಶ, ಜುದೇಯದ ಊರುಗಳು, ಮಲೆನಾಡಿನ, ಕೆಳನಾಡಿನ, ದಕ್ಷಿಣ ಪ್ರಾಂತ್ಯದ ಊರುಗಳು ಈ ಎಲ್ಲ ಸ್ಥಳಗಳಲ್ಲಿ ಜನರು ಹೊಲಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ರುಜುಹಾಕಿ, ಮುದ್ರೆ ಒತ್ತಿ, ಸಾಕ್ಷಿ ಹಾಕಿಸಿ ಕೊಂಡುಕೊಳ್ಳುವರು. ನಾನು ನನ್ನ ಜನರನ್ನು ಗುಲಾಮಗಿರಿಯಿಂದ ಬಿಡಿಸಿ ಬರಮಾಡುವೆನು.</verse>
			</chapter>
			<chapter number="33">
				<verse number="1">ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಅವನಿಗೆ ಸರ್ವೇಶ್ವರ ಎರಡನೆಯ ವಾಕ್ಯವನ್ನು ಅನುಗ್ರಹಿಸಿದರು.</verse>
				<verse number="2">ಲೋಕವನ್ನು ಸೃಷ್ಟಿಸಿ, ರೂಪಿಸಿ, ಸ್ಥಾಪಿಸಿದವರು ಹಾಗೂ ‘ಸರ್ವೇಶ್ವರ’ ಎಂದು ನಾಮಾಂಕಿತಗೊಂಡ ಅವರು ನನಗೆ ಹೀಗೆಂದರು:</verse>
				<verse number="3">“ನನ್ನನ್ನು ಬೇಡಿಕೊ, ನಾನು ನಿನಗೆ ಸದುತ್ತರವನ್ನು ದಯಪಾಲಿಸುವೆನು. ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.</verse>
				<verse number="4">ಮುತ್ತಿಗೆಗೂ ಕತ್ತಿಗೂ ತುತ್ತಾಗಲಿರುವ ಈ ಊರಿನವರ ಮನೆಗಳ ವಿಷಯವಾಗಿ ಮತ್ತು ಜುದೇಯದ ಅರಸರ ಉಪ್ಪರಿಗೆಗಳ ವಿಷಯವಾಗಿ ಇಸ್ರಯೇಲರ ದೇವರಾದ ಸರ್ವೇಶ್ವರ ಆದ ನನ್ನ ನುಡಿ ಇದು:</verse>
				<verse number="5">ಈ ಊರಿನವರು ಬಾಬಿಲೋನಿಯರ ವಿರುದ್ಧ ಕದನಕ್ಕೆ ಹೊರಟರೆ ಏನು ಪ್ರಯೋಜನ? ತಮ್ಮ ಹೆಣಗಳಿಂದ ಅವರನ್ನು ತೃಪ್ತಿಪಡಿಸುವರಷ್ಟೆ. ಇವರ ಅಧರ್ಮದ ನಿಮಿತ್ತ ಈ ನಗರಕ್ಕೆ ವಿಮುಖವಾಗಿ, ಕಡುಕೋಪಾವೇಶನಾಗಿ ನಾನೇ ಇವರನ್ನು ಸದೆಬಡಿಯುವೆನು.</verse>
				<verse number="6">ಆದರೂ ಈ ನಗರವನ್ನು ಉದ್ಧಾರಮಾಡಿ, ಸುಧಾರಿಸಿ, ಇದರ ನಿವಾಸಿಗಳನ್ನು ಗುಣಪಡಿಸುವೆನು. ಸಮೃದ್ಧಿಯಾದ ಸೌಭಾಗ್ಯವನ್ನು ಹಾಗೂ ಶಾಂತಿಸಮಾಧಾನವನ್ನು ಇವರಿಗೆ ಅನುಗ್ರಹಿಸುವೆನು.</verse>
				<verse number="7">ಜುದೇಯದ ಹಾಗೂ ಇಸ್ರಯೇಲಿನ ಗುಲಾಮಗಿರಿಯನ್ನು ಬಿಡಿಸಿ ಮೊದಲಿನಂತೆಯೆ ಅವುಗಳನ್ನು ಪುನರ್‍ ನಿರ್ಮಿಸುವೆನು.</verse>
				<verse number="8">ಅವರು ನನಗೆ ವಿರುದ್ಧವಾಗಿ ಮಾಡಿದ ಅಧರ್ಮವನ್ನೆಲ್ಲ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ನನಗೆ ವಿರುದ್ಧ ಮಾಡಿರುವ ಪಾಪದ್ರೋಹಗಳನ್ನೆಸಗಿ ಕಟ್ಟಿಕೊಂಡಿರುವ ಅಪರಾಧಗಳನ್ನೆಲ್ಲ ಕ್ಷಮಿಸುವೆನು.</verse>
				<verse number="9">ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.”</verse>
				<verse number="10">ಸರ್ವೇಶ್ವರ ಹೀಗೆನ್ನುತ್ತಾರೆ: “ಜನರಾಗಲಿ ಜಾನುವಾರುಗಳಾಗಲಿ ಇಲ್ಲದೆ ಪಾಳುಬಿದ್ದ ಸ್ಥಳವೆಂದು ನೀವು ಕರೆಯುವ ಈ ಸ್ಥಳದಲ್ಲೇ, ಅಂದರೆ ಜನಪಶುರಹಿತವಾಗಿ ನಿವಾಸಿಗಳಿಲ್ಲದೆ ಹಾಳುಬಿದ್ದಿರುವ ಜುದೇಯದ ಊರುಗಳಲ್ಲೇ, ಜೆರುಸಲೇಮಿನ ಬೀದಿಗಳಲ್ಲೇ</verse>
				<verse number="11">ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ, ಇವು ಮತ್ತೆ ಕೇಳಿಬರುವುವು. ‘ಸೇನಾಧೀಶ್ವರ ಸರ್ವೇಶ್ವರನಿಗೆ ಕೃತಜ್ಞತಾಸ್ತೋತ್ರ ಮಾಡಿ; ಆತ ಒಳ್ಳೆಯವನು, ಆತನ ಪ್ರೀತಿ ಶಾಶ್ವತ’ ಎಂದು ಹಾಡುತ್ತಾ ಕೃತಜ್ಞತಾಬಲಿಯನ್ನು ದೇವಾಲಯಕ್ಕೆ ತರುವರು. ಅವರ ಗಾನ ನಿಮ್ಮ ಕಿವಿಗೆ ಬೀಳುವುದು. ನಾಡನ್ನು ಬಿಡುಗಡೆಮಾಡಿ ಹಿಂದಿನ ಸುಸ್ಥಿತಿಗೆ ಏರಿಸುವೆನು.</verse>
				<verse number="12">ಸರ್ವಶಕ್ತ ಸರ್ವೇಶ್ವರನ ಮಾತುಗಳಿವು: “ಜನರಾಗಲಿ ಜಾನುವಾರುಗಳಾಗಲಿ ಇಲ್ಲದೆ ಹಾಳುಬಿದ್ದಿರುವ ಈ ಪ್ರಾಂತ್ಯ ಹಾಗು ಇಲ್ಲಿನ ಊರುಕೇರಿಗಳು ಮತ್ತೆ ಕುರುಬರು ತಮ್ಮ ಹಿಂಡುಗಳನ್ನು ಇಲ್ಲಿ ತಂಗಿಸಲು ಆಸರೆಯಾಗುವುವು.</verse>
				<verse number="13">ಮಲೆನಾಡಿನ, ಕೆಳನಾಡಿನ ಹಾಗೂ ದಕ್ಷಿಣ ಪ್ರಾಂತ್ಯದ ಊರುಗಳು, ಬೆನ್ಯಾಮಿನ್ ನಾಡು, ಜೆರುಸಲೇಮಿನ ಸುತ್ತಮುತ್ತಲ ಪ್ರದೇಶಗಳು, ಜುದೇಯದ ಊರುಗಳು, ಈಎಲ್ಲ ಸ್ಥಳಗಳಲ್ಲಿ ಮಂದೆಗಳು ಲೆಕ್ಕಿಸುವವನ ಕಣ್ಮುಂದೆ ಮತ್ತೆ ಹಾದುಹೋಗುವುವು. ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="14">ಸರ್ವೇಶ್ವರ ಹೀಗೆನ್ನುತ್ತಾರೆ: “ಗಮನಿಸಿರಿ! ದಿನಗಳು ಬರಲಿವೆ. ಇಸ್ರಯೇಲ್, ಯೆಹೂದ ವಂಶಗಳ ವಿಷಯವಾಗಿ ನಾನು ನುಡಿದಿರುವ ಶುಭವಾಕ್ಯವನ್ನು ನೆರವೇರಿಸುವ ದಿನಗಳು ಬರಲಿವೆ.</verse>
				<verse number="15">ಆ ಕಾಲದಲ್ಲಿ, ಆ ದಿನಗಳಲ್ಲಿ, ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯೊಂದನ್ನು ಚಿಗುರಿಸುವೆನು. ಆತನು ನಾಡಿನಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.</verse>
				<verse number="16">ಆಗ ಯೆಹೂದ್ಯರು ಸುರಕ್ಷಿತವಾಗಿರುವರು. ಜೆರುಸಲೇಮಿನವರು ನೆಮ್ಮದಿಯಿಂದ ವಾಸಿಸುವರು. ‘ಯೆಹೂವಚಿದ್ಕೇನು’ (ಅಂದರೆ ಸರ್ವೇಶ್ವರನೇ ನಮ್ಮ ಸದ್ಧರ್ಮ) ಎಂಬ ಹೆಸರು ಈ ನಗರಕ್ಕೆ ಸಲ್ಲುವುದು.</verse>
				<verse number="17">ಸರ್ವೇಶ್ವರನಾದ ನಾನು ಹೇಳುವುದೇನೆಂದರೆ: ದಾವೀದ ವಂಶವು ನಿಂತುಹೋಗದು. ಇಸ್ರಯೇಲರ ವಂಶದವರು ಆ ಸಿಂಹಾಸನದಲ್ಲಿ ಆಸೀನರಾಗುತ್ತಾ ಬರುವರು.</verse>
				<verse number="18">ಅದಕ್ಕೆ ಆ ಸಂತಾನದವರಲ್ಲಿ ಒಬ್ಬ ಗಂಡಸು ಇಲ್ಲದೆ ಇರನು. ಅಂತೆಯೇ ನನ್ನ ಸನ್ನಿಧಿಯಲ್ಲಿ ನಿರಂತರವಾಗಿ ದಹನಬಲಿಯನ್ನು, ನೈವೇದ್ಯವನ್ನು ಹಾಗೂ ಕಾಣಿಕೆಯನ್ನು ಒಪ್ಪಿಸತಕ್ಕ ಒಬ್ಬನು ಲೇವಿಕುಲದಲ್ಲಿ ಇದ್ದೇ ಇರುವನು.”</verse>
				<verse number="19">ಸರ್ವೇಶ್ವರ, ಯೆರೆಮೀಯನಿಗೆ ಈ ಮಾತನ್ನೂ ದಯಪಾಲಿಸಿದರು:</verse>
				<verse number="20">“ಸರ್ವೇಶ್ವರನಾದ ನನ್ನ ನುಡಿ ಇದು: ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ, ಹಗಲನ್ನು ಮತ್ತು ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಲು ನಿಮ್ಮಿಂದಾದೀತೆ?</verse>
				<verse number="21">ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೂ ನನ್ನ ಪರಿಚಾರಕರಾದ ಲೇವಿಕುಲದ ಯಾಜಕರೊಂದಿಗೂ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು.</verse>
				<verse number="22">ಆದರೆ, ನನ್ನ ದಾಸ ದಾವೀದನ ಸಂತಾನವನ್ನು ಅಸಂಖ್ಯಾತ ನಕ್ಷತ್ರಗಣದಷ್ಟು ಹೆಚ್ಚಿಸುವೆನು. ನನ್ನ ಪರಿಚಾರಕರಾದ ಲೇವಿಯ ಸಂಖ್ಯೆಯನ್ನು ಎಣಿಸಲಾಗದ ಸಮುದ್ರತೀರದ ಮರಳಿನಷ್ಟು ಅಧಿಕರಿಸುವೆನು.”</verse>
				<verse number="23">ಇದಲ್ಲದೆ ಸರ್ವೇಶ್ವರ ಯೆರೆಮೀಯನಿಗೆ ಈ ವಾಕ್ಯವನ್ನು ಅನುಗ್ರಹಿಸಿದರು:</verse>
				<verse number="24">“ಸರ್ವೇಶ್ವರನಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ ಎಂದು ಜನರು ಆಡಿಕೊಳ್ಳುತ್ತಿದ್ದಾರೆ. ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರೆ ಅಲ್ಲವೆ?</verse>
				<verse number="25">ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳು: ಹಗಲಿರುಳೆಂಬ ಸ್ಥಿರವಾದ ನಿಬಂಧನೆಯನ್ನು ನಾನು ಮಾಡದೆಹೋಗಿದ್ದರೆ, ಭೂಮ್ಯಾಕಾಶಗಳಿಗೆ ನಿಯಮವನ್ನು ನಾನು ವಿಧಿಸದೆಹೋಗಿದ್ದರೆ, ಆಗ ಮಾತ್ರ ನಾನು ಯಕೋಬನ ಸಂತಾನದವರನ್ನು ತ್ಯಜಿಸುತ್ತಿದ್ದೆ.</verse>
				<verse number="26">ಅಬ್ರಹಾಮ, ಇಸಾಕ, ಯಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.”</verse>
			</chapter>
			<chapter number="34">
				<verse number="1">ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು, ಅವನ ಸಮಸ್ತ ಸೈನ್ಯವು, ಅವನ ಕೈಕೆಳಗಿನ ಭೂರಾಜರೆಲ್ಲರು ಹಾಗೂ ಸಕಲ ಪ್ರಜೆಗಳು ಜೆರುಸಲೇಮಿಗೂ ಅದಕ್ಕೆ ಸೇರಿದ ಎಲ್ಲ ಊರುಗಳಿಗೂ ವಿರುದ್ಧ ಯುದ್ಧಮಾಡುತ್ತಿದ್ದಾಗ ಸರ್ವೇಶ್ವರ ಯೆರೆಮೀಯನಿಗೆ ಈ ವಿಷಯವನ್ನು ತಿಳಿಸಿದರು:</verse>
				<verse number="2">“ಇಸ್ರಯೇಲರ ದೇವರಾದ ಸರ್ವೇಶ್ವರನಾದ ನನ್ನ ನುಡಿ ಇದು: ನೀನು ಜುದೇಯದ ಅರಸ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆಂದು ಹೇಳು - ‘ಸರ್ವೇಶ್ವರನ ಮಾತನ್ನು ಆಲಿಸು: ಇಗೋ, ನಾನು ಈ ನಗರವನ್ನು ಬಾಬಿಲೋನಿನ ಅರಸನ ಕೈವಶಮಾಡುವೆನು. ಅವನು ಇದನ್ನು ಬೆಂಕಿಯಿಂದ ಸುಟ್ಟುಹಾಕುವನು.</verse>
				<verse number="3">ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಬಂಧಿತನಾಗಿ ಅವನ ವಶವಾಗುವೆ. ಬಾಬಿಲೋನಿನ ಅರಸನ ಸಮಕ್ಷಮದಲ್ಲಿ ನಿಲ್ಲುವೆ. ಅವನು ನಿನ್ನೊಡನೆ ಮುಖಾಮುಖಿಯಾಗಿ ಮಾತಾಡುವನು. ನೀನು ಬಾಬಿಲೋನಿಗೆ ಗಡಿಪಾರಾಗುವೆ.</verse>
				<verse number="4">ಆದರೂ ಜುದೇಯದ ಅರಸನಾದ ಚಿದ್ಕೀಯನೇ, ಸರ್ವೇಶ್ವರನ ಮಾತನ್ನು ಕೈಗೊಳ್ಳು; ಸರ್ವೇಶ್ವರ ನಿನ್ನ ವಿಷಯವಾಗಿ ಹೀಗೆನ್ನುತ್ತಾರೆ - ನೀನು ಕತ್ತಿಯಿಂದ ಹತನಾಗುವುದಿಲ್ಲ.</verse>
				<verse number="5">ನೆಮ್ಮದಿಯಿಂದ ಸಾಯುವೆ. ನಿನಗಿಂತ ಮುಂಚೆ, ನಿನ್ನ ಪೂರ್ವಜರಾದ ದಿವಂಗತ ಅರಸರ ಸ್ಮರಣಾರ್ಥ ಜನರು ಧೂಪಹಾಕಿದ ಪ್ರಕಾರ ನಿನಗೂ ಹಾಕುವರು. ‘ಅಯ್ಯೋ ಒಡೆಯಾ’ ಎಂದು ನಿನಗಾಗಿ ಗೋಳಾಡುವರು. ಇದು ನನ್ನ ನುಡಿ,’ ಎಂದಿದ್ದಾರೆ ಸರ್ವೇಶ್ವರ.”</verse>
				<verse number="6">ಅಂತೆಯೇ, ಪ್ರವಾದಿ ಯೆರೆಮೀಯನು ಈ ವಿಷಯಗಳನ್ನೆಲ್ಲ ಜುದೇಯದ ಅರಸ ಚಿದ್ಕೀಯನಿಗೆ ಜೆರುಸಲೇಮಿನಲ್ಲೆ ತಿಳಿಸಿದನು.</verse>
				<verse number="7">ಆಗ ಬಾಬಿಲೋನಿನ ಅರಸನ ಸೈನ್ಯವು ಜೆರುಸಲೇಮಿಗೂ ಮತ್ತು ಜುದೇಯದೊಳಗೆ ಕೋಟೆಕೊತ್ತಲದ ನಗರಗಳಾಗಿದ್ದ ಲಾಕೀಷಿಗೂ ಅಜೇಕಕ್ಕೂ ವಿರುದ್ಧ ಯುದ್ಧಮಾಡುತ್ತಿತ್ತು.</verse>
				<verse number="8">ಯೆರೆಮೀಯನಿಗೆ ಸರ್ವೇಶ್ವರನಿಂದ ಮತ್ತೊಂದು ವಾಣಿ ಉಂಟಾಯಿತು. ಇಷ್ಟರೊಳಗೆ ಅರಸ ಚಿದ್ಕೀಯನು ಮತ್ತು ಜೆರುಸಲೇಮಿನ ಜನರೆಲ್ಲರು ಸೇರಿ ಒಂದು ಒಪ್ಪಂದ ಮಾಡಿಕೊಂಡಿದ್ದರು.</verse>
				<verse number="9">ಅದರ ಪ್ರಕಾರ ಅವರಲ್ಲಿ ಪ್ರತಿ ಒಬ್ಬನು ತನ್ನ ಜೀತದಾರರಲ್ಲಿ ಹಿಬ್ರಿಯರಾದವರನ್ನು ಬಿಡುಗಡೆಮಾಡಬೇಕಿತ್ತು. ಯೆಹೂದ್ಯರಾದ ಸಹೋದರ ಸಹೋದರಿಯರನ್ನು ಯಾರೂ ಇನ್ನು ಮುಂದೆ ಜೀತದಾರರನ್ನಾಗಿ ಇರಿಸಿಕೊಳ್ಳದೆ ಅವರಿಗೆ ವಿಮೋಚನೆಯನ್ನು ಪ್ರಕಟಿಸಬೇಕೆಂಬುದು ಆ ಒಪ್ಪಂದವಾಗಿತ್ತು.</verse>
				<verse number="10">ತಮ್ಮ ತಮ್ಮ ಹೆಣ್ಣುಗಂಡು ಜೀತದಾರರನ್ನು ಬಿಡುಗಡೆಮಾಡಿ ಅವರಿಂದ ಇನ್ನು ಜೀತಮಾಡಿಸಿಕೊಳ್ಳುವುದಿಲ್ಲ ಎಂಬ ಈ ಒಪ್ಪಂದಕ್ಕೆ ಸಮ್ಮತಿಸಿದ್ದ ಎಲ್ಲ ಅಧಿಕಾರಿಗಳೂ ಸಮಸ್ತ ಪ್ರಜೆಗಳೂ ಅದರಂತೆ ನಡೆದು ಜೀತದಾರರನ್ನು ಬಿಡುಗಡೆಮಾಡಿದ್ದರು.</verse>
				<verse number="11">ಆದರೆ ಕೆಲವು ಕಾಲದ ಮೇಲೆ ತಮ್ಮ ಮನಸ್ಸನ್ನು ಬದಲಾಯಿಸಿಕೊಂಡರು. ಬಿಡುಗಡೆಮಾಡಿದ್ದವರನ್ನು ಮತ್ತೆ ಜೀತದಾರರನ್ನಾಗಿ ಸೇರಿಸಿಕೊಂಡು ಅಧೀನದಲ್ಲಿ ಇಟ್ಟುಕೊಂಡಿದ್ದರು.</verse>
				<verse number="12">ಹೀಗಿರಲು ಸರ್ವೇಶ್ವರ ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದರು:</verse>
				<verse number="13">“ಇಸ್ರಯೇಲರ ದೇವರಾದ ಸರ್ವೇಶ್ವರನ ವಾಣಿ ಇದು - ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದ ನಿಮ್ಮ ಪೂರ್ವಜರನ್ನು ನಾನು ಅಲ್ಲಿಂದ ಕರೆದುತಂದಾಗ ನಾನು ಅವರೊಡನೆ ಒಂದು ಒಪ್ಪಂದಮಾಡಿಕೊಂಡೆ.</verse>
				<verse number="14">ಒಬ್ಬ ಹಿಬ್ರಿಯನು ತನ್ನನ್ನೇ ನಿಮಗೆ ಮಾರಿಕೊಂಡು ಆರು ವರ್ಷ ನಿಮ್ಮ ಜೀತಗಾರನಾಗಿದ್ದರೆ ಅಂಥ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಿ ಎಂದು ವಿಧಿಸಿದ್ದೆ. ಆದರೆ ನಿಮ್ಮ ಪೂರ್ವಜರು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.</verse>
				<verse number="15">ನೀವೋ ಕೂಡಲೆ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ಬಿಡುಗಡೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಗೊಂಡಿರುವ ದೇವಾಲಯದಲ್ಲಿ, ನನ್ನ ಸಮ್ಮುಖದಲ್ಲಿ ಒಪ್ಪಂದಮಾಡಿಕೊಂಡಿರಿ.</verse>
				<verse number="16">ಆದರೆ ಆಮೇಲೆ ನಿಮ್ಮ ಮನಸ್ಸನ್ನು ಮಾರ್ಪಡಿಸಿಕೊಂಡಿರಿ. ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ಜೀತದಾರರನ್ನಾಗಿ ಸೇರಿಸಿಕೊಂಡು, ಶೋಷಣೆಗೆ ಗುರಿಮಾಡಿ, ನನ್ನ ನಾಮಕ್ಕೆ ಅಪಕೀರ್ತಿ ತಂದಿದ್ದೀರಿ.</verse>
				<verse number="17">ಆದಕಾರಣ ಸರ್ವೇಶ್ವರನಾದ ನಾನು ಹೇಳುವುದು ಇದು - ನೀವು ನನ್ನ ಮಾತನ್ನು ಕೇಳಲಿಲ್ಲ, ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ. ಇಗೋ ಸರ್ವೇಶ್ವರನಾದ ನನ್ನ ನುಡಿ: ಖಡ್ಗ-ವ್ಯಾಧಿ-ಕ್ಷಾಮ ಇವುಗಳಿಗೆ ನೀವು ಗುರಿ ಆಗುವಂತೆ ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ. ಲೋಕದ ಸಮಸ್ತ ರಾಜ್ಯಗಳ ಕಣ್ಣಿಗೆ ನೀವು ಭಯಾಸ್ಪದವಾಗುವಂತೆ ಮಾಡುವೆನು.</verse>
				<verse number="18">ನನ್ನ ನಿಬಂಧನೆಗಳನ್ನು ಕೈಗೊಳ್ಳದೆ, ನನ್ನ ಒಡಂಬಡಿಕೆಯನ್ನು ಮೀರಿದವರಿಗೆ ಇಬ್ಭಾಗವಾಗಿ ಸೀಳಿದ ಕರುವಿನ ಗತಿ ಬರುವಂತೆ ಮಾಡುವೆನು.</verse>
				<verse number="19">ಜುದೇಯದ ಹಾಗು ಜೆರುಸಲೇಮಿನ ರಾಜ್ಯಾಧಿಕಾರಿಗಳು, ಕಂಚುಕಿಗಳು, ಯಾಜಕರು, ಸೀಳಿದ ಕರುವಿನ ಹೋಳುಗ಼ಳ ನಡುವೆ ಹಾದು ನನ್ನ ಮುಂದೆ ಒಪ್ಪಂದಮಾಡಿದರು. ಆದರೆ ಆ ಒಪ್ಪಂದಕ್ಕೆ ತದ್ವಿರುದ್ಧವಾಗಿ ನಡೆದಿದ್ದಾರೆ ನಾಡಿನ ಎಲ್ಲ ಜನರು.</verse>
				<verse number="20">ಇವರೆಲ್ಲರನ್ನು ಶತ್ರುಗಳ ವಶಕ್ಕೆ ಒಪ್ಪಿಸುವೆನು. ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು. ಇವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವುವು.</verse>
				<verse number="21">ಜುದೇಯದ ಅರಸ ಚಿದ್ಕೀಯನನ್ನೂ ಅವನ ಮಂತ್ರಿಗಳನ್ನೂ ಅವರ ಶತ್ರುಗಳಿಗೆ ಅಂದರೆ, ಅವರ ಪ್ರಾಣಹತ್ಯಕ್ಕಾಗಿ ಕಾದಿರುವ, ತಕ್ಷಣಕ್ಕೆ ಹಿಂದಿರುಗಿಹೋಗಿರುವ, ಬಾಬಿಲೋನಿಯದ ಅರಸನ ಕೈಗೆ ಕೊಡುವೆನು.</verse>
				<verse number="22">ಸರ್ವೇಶ್ವರನಾದ ನನ್ನ ಗುರಿಯನ್ನು ಗಮನಿಸಿರಿ - ನಾನು ಅಪ್ಪಣೆಕೊಟ್ಟು, ಶತ್ರುಗಳು ಈ ನಗರಕ್ಕೆ ಮತ್ತೆ ಬರುವಂತೆ ಮಾಡುವೆನು. ಅವರು ಇದರ ವಿರುದ್ಧ ಯುದ್ಧಮಾಡಿ, ಇದನ್ನು ಆಕ್ರಮಿಸಿಕೊಂಡು, ಬೆಂಕಿಯಿಂದ ಸುಟ್ಟುಹಾಕುವರು. ನಾನು ಜುದೇಯದ ನಗರಗಳನ್ನು ನಿರ್ಜನವಾದ ಪಾಳುಭೂಮಿಯನ್ನಾಗಿಸುವೆನು.</verse>
			</chapter>
			<chapter number="35">
				<verse number="1">ಯೋಷೀಯನ ಮಗನಾದ ಜುದೇಯದ ಅರಸ ಯೆಹೋಯಾಕೀಮನ ಕಾಲದಲ್ಲಿ ಸರ್ವೇಶ್ವರ ಸ್ವಾಮಿ ಯೆರೆಮೀಯನಾದ ನನಗೆ ದಯಪಾಲಿಸಿದ ವಾಕ್ಯ ಇದು:</verse>
				<verse number="2">“ನೀನು ರೇಕಾಬನ ಮನೆತನದವರ ಬಳಿಗೆ ಹೋಗಿ, ಅವರ ಸಂಗಡ ಮಾತಾಡು. ಅವರನ್ನು ಸರ್ವೇಶ್ವರನಾಲಯದ ಒಂದು ಕೋಣೆಯೊಳಕ್ಕೆ ಕರೆದು ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಡು.”</verse>
				<verse number="3">ಅಂತೆಯೆ ನಾನು (ಮತ್ತೊಬ್ಬ) ಯೆರೆಮೀಯನ ಮಗನೂ ಹಬಚ್ಚಿನ್ಯನ ಮೊಮ್ಮಗನೂ ಆದ ಯಾಜನ್ಯನನ್ನು, ಅವನ ಅಣ್ಣತಮ್ಮಂದಿರನ್ನು, ಅವನ ಎಲ್ಲ ಮಕ್ಕಳನ್ನು, ಅಂತು ರೇಕಾಬನ ಮನೆತನದವರೆಲ್ಲರನ್ನೂ ಸರ್ವೇಶ್ವರನಾಲಯಕ್ಕೆ ಕರೆದೊಯ್ದೆನು.</verse>
				<verse number="4">ಇಗ್ದಲ್ಯನ ಮಗನೂ ದೇವರ ಮನುಷ್ಯನೂ ಆದ ಹಾನಾನನ ಮಕ್ಕಳ ಕೋಣೆಯೊಳಕ್ಕೆ, ಅಂದರೆ ಪದಾಧಿಕಾರಿಗಳ ಕೋಣೆಯ ಪಕ್ಕದಲ್ಲಿ, ಶಲ್ಲೂಮನ ಮಗನೂ ದ್ವಾರಪಾಲಕನೂ ಆದ ಮಾಸೇಯನ ಕೋಣೆಯ ಮೇಲ್ಗಡೆಯಿರುವ ಕೋಣೆಯೊಳಕ್ಕೆ ಅವರೆಲ್ಲರನ್ನು ಬರಮಾಡಿದೆನು.</verse>
				<verse number="5">ರೇಕಾಬನ ಆ ಮನೆತನದವರ ಮುಂದೆ ದ್ರಾಕ್ಷಾರಸ ತುಂಬಿದ ಬಟ್ಟಲುಗಳನ್ನೂ ಪಂಚಪಾತ್ರೆಗಳನ್ನೂ ಇಟ್ಟು, ‘ದ್ರಾಕ್ಷಾರಸವನ್ನು ಕುಡಿಯಿರಿ’ ಎಂದು ಹೇಳಿದೆನು.</verse>
				<verse number="6">ಅದಕ್ಕೆ ಅವರು, “ನಾವು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ, ‘ನೀವಾಗಲಿ ನಿಮ್ಮ ಸಂತಾನದವರಾಗಲಿ ಯುಗಯುಗಾಂತರಕ್ಕೂ ದ್ರಾಕ್ಷಾರಸವನ್ನು ಕುಡಿಯಲೇಬಾರದು.</verse>
				<verse number="7">ಮನೆ ಕಟ್ಟಬಾರದು, ಬೀಜಬಿತ್ತಬಾರದು, ತೋಟಮಾಡಬಾರದು, ಕೊಂಡು ಸೊತ್ತಾಗಿಸಿಕೊಳ್ಳಬಾರದು. ಜೀವಮಾನವೆಲ್ಲ ಗುಡಾರಗಳಲ್ಲೇ ವಾಸಿಸಬೇಕು. ಇದರಿಂದ ನೀವು ತಂಗುವ ನಾಡಿನಲ್ಲಿ ದೀರ್ಘಕಾಲ ಉಳಿಯುವಿರಿ,’ ಎಂದು ಆಜ್ಞಾಪಿಸಿದ್ದಾನೆ.</verse>
				<verse number="8">ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ ಕೊಟ್ಟ ಈ ಅಪ್ಪಣೆಯನ್ನು ಎಲ್ಲ ವಿಷಯದಲ್ಲೂ ಕೈಗೊಂಡು ಬರುತ್ತಿದ್ದೇವೆ. ನಾವಾಗಲಿ, ನಮ್ಮ ಮಡದಿ ಮಕ್ಕಳಾಗಲಿ, ಜೀವಮಾನದಲ್ಲೆಲ್ಲಾ ‘ದ್ರಾಕ್ಷಾರಸ ಕುಡಿಯುವುದಿಲ್ಲ.</verse>
				<verse number="9">ವಾಸಕ್ಕೆ ನಾವು ಮನೆಕಟ್ಟುವುದಿಲ್ಲ. ನಮಗೆ ತೋಟವಿಲ್ಲ, ಹೊಲವಿಲ್ಲ, ಬಿತ್ತನೆ ಬೀಜವಿಲ್ಲ.</verse>
				<verse number="10">ಗುಡಾರಗಳಲ್ಲಿ ವಾಸಿಸುತ್ತಾ ನಮ್ಮ ಪೂರ್ವಜ ಯೋನಾದಾಬನು ನಮಗೆ ವಿಧಿಸಿದ್ದನ್ನೆಲ್ಲ ಶಿರಸಾವಹಿಸಿ ನಡೆಸಿಕೊಂಡು ಬರುತ್ತಿದ್ದೇವೆ.</verse>
				<verse number="11">ಆದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಈ ನಾಡಿಗೆ ಮುತ್ತಿಗೆ ಹಾಕಿದಾಗ, ಬಾಬಿಲೋನಿಯ ಮತ್ತು ಸಿರಿಯದವರ ಸೈನ್ಯಗಳಿಂದ ತಪ್ಪಿಸಿಕೊಳ್ಳಲು, ‘ಜೆರುಸಲೇಮಿಗೆ ಹೋಗೋಣ ಬನ್ನಿ’ ಎಂದುಕೊಂಡು ಬಂದೆವು. ಈ ಕಾರಣದಿಂದಲೇ ಇಲ್ಲಿ ವಾಸಿಸುತ್ತಿದ್ದೇವೆ,” ಎಂದು ಹೇಳಿದರು.</verse>
				<verse number="12">ಆಗ ಸರ್ವೇಶ್ವರ ಯೆರೆಮೀಯನಿಗೆ:</verse>
				<verse number="13">“ಇಸ್ರಯೇಲರ ದೇವರೂ ಸೇನಾಧೀಶ್ವರನೂ ಸರ್ವೇಶ್ವರನೂ ಆದ ನಾನು ಹೇಳುವುದು ಇದು: ನೀನು ಹೋಗಿ ಯೆಹೂದ್ಯರಿಗೂ ಜೆರುಸಲೇಮಿನ ನಿವಾಸಿಗಳಿಗೂ ಹೀಗೆಂದು ತಿಳಿಸು: ‘ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವುದಿಲ್ಲವೆ?’ ಎನ್ನುತ್ತಾರೆ ಸರ್ವೇಶ್ವರ.</verse>
				<verse number="14">‘ರೇಕಾಬನ ಮಗ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ. ಅವರು ಇಂದಿನವರೆಗೂ ಕುಡಿಯಲಿಲ್ಲ. ತಮ್ಮ ಪೂರ್ವಜನ ಆಜ್ಞೆಯನ್ನು ಕೈಗೊಂಡಿದ್ದಾರೆ. ನೀವೋ, ನಾನು ನಿಮಗೆ ಪದೇ ಪದೇ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.</verse>
				<verse number="15">ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲ ನಿಮ್ಮ ಬಳಿಗೆ ನಿರಂತರವಾಗಿ ಕಳಿಸುತ್ತಾ ಬಂದೆ. ನೀವೆಲ್ಲರು ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ಸುಖವಾಸಿಗಳಾಗಿರುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ. ಆದರೆ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.</verse>
				<verse number="16">ರೇಕಾಬನ ಮಗ ಯೋನಾದಾಬನ ಸಂತಾನದವರು ತಮ್ಮ ಪೂರ್ವಜರು ತಮಗೆ ವಿಧಿಸಿದ್ದನ್ನು ಕೇಳಿ ಅನುಸರಿಸಿದರು. ಆದರೆ ಈ ಜನರು ನನ್ನ ಮಾತನ್ನು ಕೇಳದೆಹೋದರು.</verse>
				<verse number="17">ಆದ್ದರಿಂದ ಸೇನಾಧೀಶ್ವರ ಸರ್ವೇಶ್ವರನೂ ಇಸ್ರಯೇಲಿನ ದೇವರೂ ಆದ ನಾನು ಹೇಳುವುದನ್ನು ಗಮನಿಸು: ಯೆಹೂದ್ಯರಿಗೂ ಜೆರುಸಲೇಮಿನವರೆಲ್ಲರಿಗೂ ನಾನು ಕೊಟ್ಟ ಶಾಪದ ಕೇಡುಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು. ನಾನು ಹೇಳಿದರೂ ಅವರು ಕೇಳಲಿಲ್ಲ, ಕೂಗಿದರೂ ಉತ್ತರಕೊಡಲಿಲ್ಲ’.”</verse>
				<verse number="18">ಯೆರೆಮೀಯನು ರೇಕಾಬ್ಯರಿಗೆ, “ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ: ‘ನೀವು ನಿಮ್ಮ ಪೂರ್ವಜ ಯೋನಾದಾಬನ ಅಪ್ಪಣೆಯನ್ನು ಕೇಳಿ ಅವನ ಎಲ್ಲ ವಿಧಿಗಳನ್ನು ಅನುಸರಿಸಿ, ಅವನು ಆಜ್ಞಾಪಿಸಿದ್ದನ್ನೆಲ್ಲ ನೆರವೇರಿಸಿದ ಕಾರಣ</verse>
				<verse number="19">ರೇಕಾಬನ ಮಗ ಯೋನಾದಾಬನ ಸಂತಾನದವರಲ್ಲಿ ನನ್ನ ಸಮ್ಮುಖ ಸೇವೆಮಾಡತಕ್ಕವರು ತಲತಲಾಂತರಕ್ಕೂ ಇದ್ದೇ ಇರುವರು’ ಎಂದನು.”</verse>
			</chapter>
			<chapter number="36">
				<verse number="1">ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಯೆರೆಮೀಯನಿಗೆ ಕೇಳಿ ಬಂದ ಸರ್ವೇಶ್ವರನ ವಾಣಿ:</verse>
				<verse number="2">“ನೀನು ಗ್ರಂಥ ಬರೆಯುವ ಒಂದು ಸುರುಳಿಯನ್ನು ತೆಗೆದುಕೊಂಡು, ನಾನು ಯೋಷೀಯನ ಕಾಲದಲ್ಲಿ ನಿನ್ನ ಸಂಗಡ ಮಾತಾಡಿದಂದಿನಿಂದ ಇಂದಿನವರೆಗೆ ಇಸ್ರಯೇಲ್, ಯೆಹೂದ ಹಾಗೂ ಸಕಲ ರಾಷ್ಟ್ರಗಳ ವಿಷಯವಾಗಿ ನಿನಗೆ ನುಡಿಯುತ್ತಾ ಬಂದಿರುವ ಮಾತುಗಳನ್ನೆಲ್ಲ ಬರೆ.</verse>
				<verse number="3">ಬಹುಶಃ, ಯೆಹೂದ ವಂಶದವರು ನಾನು ಅವರಿಗೆ ಮಾಡಬೇಕೆಂದಿರುವ ಕೇಡನ್ನಾದರು ಕೇಳಿ ತಮ್ಮ ದುರ್ಮಾರ್ಗಗಳನ್ನು ಬಿಟ್ಟು ಹಿಂದಿರುಗಬಹುದು. ಹಿಂದಿರುಗಿದರೆ, ಅವರ ಪಾಪಾಪರಾಧಗಳನ್ನು ಕ್ಷಮಿಸಿಬಿಡುವೆನು.”</verse>
				<verse number="4">ಆಗ ಯೆರೆಮೀಯನು ನೇರೀಯನ ಮಗ ಬಾರೂಕನನ್ನು ಕರೆಯಿಸಿ ಸರ್ವೇಶ್ವರನ ಮಾತುಗಳನ್ನೆಲ್ಲ ಹೇಳಿದನು. ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರುಳಿಯಲ್ಲಿ ಬರೆದನು.</verse>
				<verse number="5">ಬಳಿಕ ಯೆರೆಮೀಯನು ಬಾರೂಕನಿಗೆ, “ಸರ್ವೇಶ್ವರನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಮಾಡಲಾಗಿದೆ.</verse>
				<verse number="6">ಆದುದರಿಂದ ನೀನೇ ಹೋಗಿ ನನ್ನ ಬಾಯಿಂದ ಬಂದ ಹಾಗೆ ನೀನು ಈ ಸುರುಳಿಯಲ್ಲಿ ಬರೆದಿರುವ ಸರ್ವೇಶ್ವರನ ವಾಕ್ಯಗಳನ್ನು, ಉಪವಾಸದಿನದಂದು, ಸರ್ವೇಶ್ವರನ ಆಲಯದೊಳಗೆ ಕೂಡಿರುವ ಜನರಿಗೂ ಆಯಾಯ ಊರುಗಳಿಂದ ಬಂದಿರುವ ಯೆಹೂದ್ಯರೆಲ್ಲರಿಗೂ ಕೇಳಿಸುವಂತೆ ಓದು.</verse>
				<verse number="7">ಅವರು ಒಂದು ವೇಳೆ ಸರ್ವೇಶ್ವರನಿಗೆ ಶರಣಾಗತರಾಗಿ ತಮ್ಮ ದುರ್ಮಾರ್ಗಗಳಿಂದ ಹಿಂದಿರುಗಬಹುದು. ಏಕೆಂದರೆ, ಸರ್ವೇಶ್ವರ ಆ ಜನರ ವಿರುದ್ಧ ತೋರಿಸಬೇಕೆಂದಿರುವ ಕೋಪಾಕ್ರೋಶ ಭಯಾನಕವಾಗಿದೆ,” ಎಂದು ಆಜ್ಞಾಪಿಸಿದನು.</verse>
				<verse number="8">ಪ್ರವಾದಿ ಯೆರೆಮೀಯನು ವಿಧಿಸಿದಂತೆಯೇ ನೇರೀಯನ ಮಗ ಬಾರೂಕನು ಸುರುಳಿಯಲ್ಲಿದ್ದ ಸರ್ವೇಶ್ವರನ ವಾಕ್ಯಗಳನ್ನು ಸರ್ವೇಶ್ವರನ ಆಲಯದೊಳಗೆ ಓದಿದನು.</verse>
				<verse number="9">ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ಐದನೆಯ ವರ್ಷದ ಒಂಬತ್ತನೆಯ ಒಂಬತ್ತನೆಯ ತಿಂಗಳಲ್ಲಿ ಜೆರುಸಲೇಮಿನವರೆಲ್ಲರು ಹಾಗು ಜುದೇಯದ ಊರುಗಳಿಂದ ಜೆರುಸಲೇಮಿಗೆ ಬಂದಿದ್ದವರೆಲ್ಲರು ಸರ್ವೇಶ್ವರನ ಸಮ್ಮುಖದಲ್ಲಿ ಉಪವಾಸವ್ರತವನ್ನು ಗೊತ್ತುಮಾಡಿ ಪ್ರಕಟಿಸಿದ್ದರು.</verse>
				<verse number="10">ಆಗ ಬಾರೂಕನು ಸರ್ವೇಶ್ವರನ ಆಲಯದೊಳಗೆ, ಮೇಲಣ ಪ್ರಾಕಾರದಲ್ಲಿ, ಹೊಸಬಾಗಿಲ ಹತ್ತಿರ, ಲೇಖಕ ಶಾಫಾನನ ಮಗ ಗೆಮರ್ಯನ ಕೊಠಡಿಯಲ್ಲಿ ಸುರುಳಿಯಲ್ಲಿನ ಯೆರೆಮೀಯನ ಮಾತುಗಳನ್ನು ಜನರೆಲ್ಲರಿಗೂ ಕೇಳಿಸುವಂತೆ ಓದಿದನು.</verse>
				<verse number="11">ಶಾಫಾನನ ಮೊಮ್ಮಗನೂ ಗೆಮರ್ಯನ ಮಗನೂ ಆದ ಮೀಕಾಯನು ಸುರುಳಿಯಿಂದ ಓದಲಾದ ಸರ್ವೇಶ್ವರನ ವಾಕ್ಯಗಳನ್ನು ಕೇಳಿದನು. ಅಲ್ಲಿಂದ ಅರಮನೆಯಲ್ಲಿದ್ದ ಲೇಖಕನ ಕೊಠಡಿಗೆ ಇಳಿದುಹೋದನು.</verse>
				<verse number="12">ಅಲ್ಲಿ ಲೇಖಕ ಎಲೀಷಾಮನು, ಶೆಮಾಯನ ಮಗ ದೆಲಾಯನು, ಅಕ್ಬೋರನ ಮಗ ಎಲ್ನಾಥಾನನು, ಶೆಫಾನನ ಮಗ ಗೆಮರ್ಯನು, ಹನನೀಯನ ಮಗ ಚಿದ್ಕೀಯನು, ಹೀಗೆ ರಾಜ್ಯಾಧಿಕಾರಿಗಳೆಲ್ಲರು ಕುಳಿತುಕೊಂಡಿದ್ದರು.</verse>
				<verse number="13">ಮಿಕಾಯನು ತನ್ನ ಹಾಗೂ ಜನರ ಮುಂದೆ ಗ್ರಂಥ ಸುರುಳಿಯಿಂದ ಬಾರೂಕನು ಓದಿ ಹೇಳಿದ್ದ ಎಲ್ಲ ಮಾತುಗಳನ್ನು ಅವರಿಗೆ ತಿಳಿಸಿದನು.</verse>
				<verse number="14">ಅಧಿಕಾರಿಗಳೆಲ್ಲರು ಸೇರಿ, ನೆಥನ್ಯನ ಮಗನೂ ಶೆಲೆಮ್ಯನ ಮೊಮ್ಮಗನೂ ಕೂಷಿಯ ಮರಿಮಗನೂ ಆದ ಯೆಹೂದಿಯನನ್ನು ಬಾರೂಕನ ಬಳಿಗೆ ಕಳಿಸಿದರು. ‘ನೀನು ಜನರ ಮುಂದೆ ಓದಿದ ಸುರುಳಿಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಬಾ’ ಎಂದು ಹೇಳಿ ಕಳಿಸಿದರು. ಅಂತೆಯೆ ನೇರೀಯನ ಮಗ ಬಾರೂಕನು ಸುರುಳಿಯನ್ನು ತನ್ನ ಕೈಯಲ್ಲೆ ತೆಗೆದುಕೊಂಡು ಅವರ ಬಳಿಗೆ ಕೂಡಲೇ ಬಂದನು.</verse>
				<verse number="15">ಅಧಿಕಾರಿಗಳು ಅವನಿಗೆ, “ನೀನು ಇಲ್ಲಿ ಕುಳಿತುಕೊಂಡು ಅದನ್ನು ನಮ್ಮ ಮುಂದೆ ಓದು” ಎಂದು ಸ್ವಾಗತಿಸಿದರು. ಬಾರೂಕನು ಅವರ ಮುಂದೆ ಓದಿದನು.</verse>
				<verse number="16">ಆ ಎಲ್ಲ ಮಾತುಗಳನ್ನು ಅವರು ಕೇಳಿ ತಳಮಳಗೊಂಡು ಒಬ್ಬರನ್ನೊಬ್ಬರು ನೋಡಿದರು. “ನಾವು ಈ ಮಾತುಗಳನ್ನೆಲ್ಲ ಅರಸನಿಗೆ ತಿಳಿಸಲೇಬೇಕು” ಎಂದು ಬಾರೂಕನಿಗೆ ಹೇಳಿದರು.</verse>
				<verse number="17">“ನೀನು ಈ ಮಾತುಗಳನ್ನೆಲ್ಲ ಹೇಗೆ ಬರೆದೆ? ಅವನ ಬಾಯಿಂದ ಬಂದ ಹಾಗೆಯೇ ಬರೆದೆಯೋ ಇಲ್ಲವೋ ನಮಗೆ ತಿಳಿಸು,” ಎಂದು ವಿನಂತಿಸಿದರು.</verse>
				<verse number="18">ಅದಕ್ಕೆ ಬಾರೂಕನು ಅವರಿಗೆ, “ಈ ಮಾತುಗಳೆಲ್ಲ ಯೆರೆಮೀಯನ ಬಾಯಿಂದಲೇ ಬಂದವುಗಳು. ಅವನು ನುಡಿದ ಹಾಗೆ ನಾನು ಅವುಗಳನ್ನು ಶಾಯಿಯಿಂದ ಈ ಸುರುಳಿಯಲ್ಲಿ ಬರೆದೆ,” ಎಂದು ಉತ್ತರಕೊಟ್ಟನು.</verse>
				<verse number="19">ಆಗ ರಾಜ್ಯಾಧಿಕಾರಿಗಳು ಬಾರೂಕನಿಗೆ, ನೀನೂ ಯೆರೆಮೀಯನೂ ಹೊರಟುಹೋಗಿ ಅವಿತುಕೊಳ್ಳಬೇಕು. ನೀವು ಇಲ್ಲಿದ್ದೀರೆಂದು ಯಾರಿಗೂ ಗೊತ್ತಾಗಬಾರದು,” ಎಂದು ಹೇಳಿದರು.</verse>
				<verse number="20">ಅಧಿಕಾರಿಗಳು ಸುರುಳಿಯನ್ನು ಲೇಖಕ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟು, ಪ್ರಾಕಾರದಲ್ಲಿದ್ದ ಅರಸನ ಬಳಿಗೆ ಹೋಗಿ, ಈ ಮಾತುಗಳನ್ನೆಲ್ಲ ಅರಿಕೆ ಮಾಡಿದರು. ಅರಸನು ಕೂಡಲೆ ಸುರುಳಿಯನ್ನು ತರಬೇಕೆಂದು ಯೆಹೂದಿಯನ್ನು ಕಳಿಸಿದನು.</verse>
				<verse number="21">ಅವನು ಲೇಖಕ ಎಲೀಷಾಮನ ಕೊಠಡಿಯಿಂದ ಅದನ್ನು ತೆಗೆದುಕೊಂಡು ಬಂದು ಅರಸನ ಮತ್ತು ಅವನ ಪಕ್ಕದಲ್ಲಿ ನಿಂತಿದ್ದ ಎಲ್ಲ ರಾಜ್ಯಾಧಿಕಾರಿಗಳ ಮುಂದೆ ಓದಿದನು.</verse>
				<verse number="22">ಅದು ವರ್ಷದ ಒಂಬತ್ತನೇ ತಿಂಗಳು. ಅರಸನು ಚಳಿಗಾಲದ ಮನೆಯಲ್ಲಿ ಕುಳಿತಿದ್ದನು. ಅವನ ಮುಂದೆ ಅಗ್ಗಿಷ್ಟಿಕೆ ಉರಿಯುತ್ತಿತ್ತು.</verse>
				<verse number="23">ಯೆಹೂದಿ ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಚೂರಿಯಿಂದ ಕತ್ತರಿಸಿ ಸುರುಳಿ ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.</verse>
				<verse number="24">ಅರಸನೇ ಆಗಲಿ, ಅವನ ಸೇವಕರಲ್ಲಿ ಯಾರೇ ಆಗಲಿ, ಸುರುಳಿಯ ಮಾತುಗಳನ್ನೆಲ್ಲಾ ಕೇಳಿಯೂ ಭಯಪಡಲಿಲ್ಲ. ದುಃಖಸೂಚನೆಗಾಗಿ ತಮ್ಮ ಬಟ್ಟೆಯನ್ನು ಹರಿದುಕೊಳ್ಳಲಿಲ್ಲ.</verse>
				<verse number="25">ಎಲ್ನಾಥಾನನು, ದೆಲಾಯನು ಹಾಗೂ ಗೆಮರ್ಯನು ಅರಸನಿಗೆ ಸುರುಳಿಯನ್ನು ಸುಡಬಾರದೆಂದು ವಿನಯದಿಂದ ವಿಜ್ಞಾಪನೆಮಾಡಿದರೂ ಅವನು ಕೇಳಲಿಲ್ಲ.</verse>
				<verse number="26">ಬದಲಿಗೆ ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗ ಸೆರಾಯ, ಅಬ್ದೆಯೇಲನ ಮಗ ಶಲೆಮ್ಯ, ಇವರಿಗೆ ಲೇಖಕನಾದ ಬಾರೂಕನನ್ನು ಮತ್ತು ಪ್ರವಾದಿ ಯೆರೆಮೀಯನನ್ನು ಸೆರೆಹಿಡಿಯಬೇಕೆಂದು ಆಜ್ಞಾಪಿಸಿದನು. ಆದರೆ ಸರ್ವೇಶ್ವರ ಅವರನ್ನು ಮರೆಯಲ್ಲಿಟ್ಟಿದ್ದರು.</verse>
				<verse number="27">ಯೆರೆಮೀಯನ ಬಾಯಿಂದ ಬಂದ ಹಾಗೆ ಬಾರೂಕನು ಬರೆದಿದ್ದ ಸುರುಳಿಯನ್ನು ಅರಸನು ಸುಟ್ಟುಹಾಕಿದ ಮೇಲೆ ಯೆರೆಮೀಯನಿಗೆ ಸರ್ವೇಶ್ವರನಿಂದ ಈ ವಾಣಿ ಕೇಳಿಬಂದಿತು:</verse>
				<verse number="28">“ನೀನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ಜುದೇಯದ ಅರಸ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರುಳಿಯಲ್ಲಿದ್ದ ಹಿಂದಿನ ಆ ಮಾತುಗಳನ್ನೆಲ್ಲ ಪುನಃ ಬರೆಯಿಸು.</verse>
				<verse number="29">ಅದೂ ಅಲ್ಲದೆ ಜುದೇಯದ ಅರಸ ಯೆಹೋಯಾಕೀಮನ ವಿಷಯದಲ್ಲಿ ಹೀಗೆ ಬರೆಯಿಸು: ‘ಸರ್ವೇಶ್ವರ ಹೀಗೆಂದಿದ್ದಾರೆ - ಬಾಬಿಲೋನಿನ ಅರಸನು ಬಂದು ಈ ನಾಡನ್ನು ಜನ ಅಥವಾ ಜಾನುವಾರುಗಳಿಲ್ಲದಂತೆ ಹಾಳುಮಾಡುವುದು ಖಂಡಿತ ಎಂದು ಈ ಸುರುಳಿಯಲ್ಲಿ ಬರೆಸಿದ್ದು ಏಕೆ ಎಂದು ಪ್ರಶ್ನಿಸಿ, ಆಕ್ಷೇಪಿಸಿ ಅದನ್ನು ನೀನು ಸುಟ್ಟುಬಿಟ್ಟಿಯಲ್ಲವೆ?</verse>
				<verse number="30">ಈ ಕಾರಣ ಜುದೇಯದ ಅರಸ ಯೆಹೋಯಾಕೀಮನು ಆದ ನಿನ್ನ ವಿರುದ್ಧ ಸರ್ವೇಶ್ವರ ಹೀಗೆನ್ನುತ್ತಾರೆ - ಇವನ ಸಂತಾನದಲ್ಲಿ ಯಾವನೂ ದಾವೀದನ ಸಿಂಹಾಸನದಲ್ಲಿ ಕೂರನು. ಇವನ ಹೆಣವು ಬಿಸಾಡಲ್ಪಟ್ಟು ಹಗಲಿನ ತಾಪಕ್ಕೂ ಇರುಳಿನ ಚಳಿಗೂ ಈಡಾಗುವುದು.</verse>
				<verse number="31">ಅರಸನನ್ನೂ ಅವನ ಸಂತತಿ ಹಾಗೂ ಸೇವಕರನ್ನೂ ಅವರು ಮಾಡಿದ ಅಧರ್ಮಕ್ಕಾಗಿ ದಂಡಿಸುವೆನು. ನಾನು ಇವರನ್ನು, ಜೆರುಸಲೇಮಿನವರನ್ನು ಹಾಗೂ ಯೆಹೂದ್ಯರನ್ನು ‘ನಿಮಗೆ ದೊಡ್ಡ ಕೇಡಾಗಲಿದೆ’ ಎಂದು ಎಚ್ಚರಿಸಿದರೂ ಅವರು ಕೇಳಲಿಲ್ಲ. ಆದ್ದರಿಂದ ಆ ಕೇಡನ್ನೆಲ್ಲಾ ಇವರೆಲ್ಲರ ಮೇಲೆ ಬರಮಾಡುವೆನು’.”</verse>
				<verse number="32">ಆಗ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾದ ಲೇಖಕ ಬಾರೂಕನಿಗೆ ಕೊಟ್ಟನು. ಅವನು ಅದರಲ್ಲಿ ಜುದೇಯದ ಅರಸ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲ ಮಾತುಗಳನ್ನು ಬರೆದನು. ಅದು ಮಾತ್ರವಲ್ಲ, ಅಂಥ ಅನೇಕ ಮಾತುಗಳನ್ನೂ ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು.</verse>
			</chapter>
			<chapter number="37">
				<verse number="1">ಯೋಷೀಯನ ಮಗ ಚಿದ್ಕೀಯನು ಯೆಹೋಯಾಕೀಮನ ಮಗ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು. ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅವನನ್ನು ಜುದೇಯದ ನಾಡಿಗೆ ಅರಸನನ್ನಾಗಿಸಿದ್ದನು.</verse>
				<verse number="2">ಆದರೆ ಚಿದ್ಕೀಯನಾಗಲಿ, ಅವನ ಸೇವಕರಾಗಲಿ, ನಾಡಿನ ಜನರಾಗಲಿ ಸರ್ವೇಶ್ವರನು ಪ್ರವಾದಿ ಯೆರೆಮೀಯನಿಂದ ನುಡಿಸಿದ ಮಾತುಗಳನ್ನು ಕೇಳದೆಹೋದರು.</verse>
				<verse number="3">ಹೀಗಿರುವಲ್ಲಿ ಅರಸ ಚಿದ್ಕೀಯನು ಶೆಲೆಮ್ಯನ ಮಗ ಯೆಹೂಕಲನನ್ನು ಮತ್ತು ಯಾಜಕ ಮಾಸೇಯನ ಮಗ ಚೆಫನ್ಯನನ್ನು ಯೆರೆಮೀಯನ ಬಳಿಗೆ ಕಳಿಸಿ, “ನಮಗಾಗಿ ನಮ್ಮ ದೇವರಾದ ಸರ್ವೇಶ್ವರನನ್ನು ಪ್ರಾರ್ಥಿಸು” ಎಂದು ವಿನಂತಿಸಿದನು.</verse>
				<verse number="4">ಆಗ ಯೆರೆಮೀಯನು ಇನ್ನೂ ಸೆರೆಯಾಗಿರಲಿಲ್ಲ. ಜನರಲ್ಲಿಗೆ ಹೋಗುತ್ತಾ ಬರುತ್ತಿದ್ದನು.</verse>
				<verse number="5">ಅಷ್ಟರಲ್ಲಿ ಫರೋಹನ ಸೈನ್ಯವು ಈಜಿಪ್ಟಿನಿಂದ ಹೊರಟಿತ್ತು. ಈ ಸಂಗತಿಯನ್ನು ಕೇಳಿ, ಜೆರುಸಲೇಮನ್ನು ಈಗಾಗಲೆ ಮುತ್ತಿದ್ದ ಬಾಬಿಲೋನಿಯದ ಸೈನಿಕರು ಅದನ್ನು ಬಿಟ್ಟುಹೋಗಿದ್ದರು.</verse>
				<verse number="6">ಈ ಸಂದರ್ಭದಲ್ಲಿ ಪ್ರವಾದಿ ಯೆರೆಮೀಯನಿಗೆ ಸರ್ವೇಶ್ವರನಿಂದ ಕೇಳಿ ಬಂದ ವಾಣಿ:</verse>
				<verse number="7">“ಇಸ್ರಯೇಲರ ದೇವರಾದ ಸರ್ವೇಶ್ವರ ಹೀಗೆ ಎನ್ನುತ್ತಾರೆ - ನನ್ನ ಅಭಿಪ್ರಾಯವನ್ನು ವಿಚಾರಿಸಲು ನಿಮ್ಮನ್ನು ನನ್ನ ಬಳಿಗೆ ಕಳಿಸಿದ ಜುದೇಯದ ಅರಸನಿಗೆ ಹೀಗೆಂದು ಹೇಳಿರಿ: ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶಕ್ಕೆ ಹಿಂದಿರುಗುವುದು.</verse>
				<verse number="8">ಬಾಬಿಲೋನಿಯದವರು ಪುನಃ ಬಂದು ಈ ನಗರದ ಮೇಲೆ ದಾಳಿ ನಡೆಸುವರು. ಇದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಹಾಕುವರು.’</verse>
				<verse number="9">ಸರ್ವೇಶ್ವರ ಇಂತೆನ್ನುತ್ತಾರೆ:- ಬಾಬಿಲೋನಿಯರು ನಿಮ್ಮಿಂದ ಖಂಡಿತವಾಗಿ ತೊಲಗಿಹೋಗುವರು ಎಂದುಕೊಂಡು ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿ. ಅವರು ಹೋಗುವುದಿಲ್ಲ.</verse>
				<verse number="10">ದಾಳಿಮಾಡುವ ಆ ಬಾಬಿಲೋನಿಯರನ್ನು ನೀವು ಪೂರ್ತಿಯಾಗಿ ಸೋಲಿಸಿದರೂ, ಅವರಲ್ಲಿ ಗಾಯಗೊಂಡವರು ಮಾತ್ರ ನಿಮ್ಮಲ್ಲಿ ಉಳಿದರೂ, ಆ ಗಾಯಗೊಂಡವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದುಬಂದು ಈ ನಗರವನ್ನು ಬೆಂಕಿಯಿಂದ ಸುಟ್ಟುಬಿಡುವರು.</verse>
				<verse number="11">ಬಾಬಿಲೋನಿಯದ ಸೈನ್ಯವು ಫರೋಹನ ಸೈನ್ಯಕ್ಕೆ ಭಯಪಟ್ಟು ಜೆರುಸಲೇಮನ್ನು ಬಿಟ್ಟುಹೋಯಿತು.</verse>
				<verse number="12">ಆಗ ಯೆರೆಮೀಯನು ಬೆನ್ಯಾಮೀನ್ ನಾಡಿನಲ್ಲಿ ತನಗೆ ಬರಬೇಕಾಗಿದ್ದ ಸೊತ್ತನ್ನು ಜನರ ಸಮಕ್ಷಮದಲ್ಲಿ ತೆಗೆದುಕೊಳ್ಳಲು ಜೆರುಸಲೇಮಿನಿಂದ ಅಲ್ಲಿಗೆ ಹೊರಟನು.</verse>
				<verse number="13">ಬೆನ್ಯಾಮೀನನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆ ಕುಳಿತಿದ್ದನು. ಅವನು ಪ್ರವಾದಿ ಯೆರೆಮೀಯನನ್ನು, “ನೀನು ಬಾಬಿಲೋನಿಯರನ್ನು ಮರೆಹೋಗಲು ಹೋಗುತ್ತಿರುವೆ,” ಎಂದು ಹೇಳಿ ಅವನನ್ನು ಬಂಧಿಸಿದನು.</verse>
				<verse number="14">ಅದಕ್ಕೆ ಯೆರೆಮೀಯನು, “ಅದು ಸುಳ್ಳು, ನಾನು ಬಾಬಿಲೋನಿಯರನ್ನು ಮರೆಹೋಗುವವನಲ್ಲ,” ಎಂದನು. ಇರೀಯನು ಅವನ ಮಾತನ್ನು ಕೇಳದೆ ಅವನನ್ನು ಬಂಧಿಸಿ, ಪದಾಧಿಕಾರಿಗಳ ಬಳಿಗೆ ಕರೆದುತಂದನು.</verse>
				<verse number="15">ಆ ಅಧಿಕಾರಿಗಳು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.</verse>
				<verse number="16">ಯೆರೆಮೀಯನು ಆ ಬಂದಿಖಾನೆಯ ನೆಲಮನೆಗಳಲ್ಲಿ ಕೆಲವು ದಿವಸ ಇದ್ದನು.</verse>
				<verse number="17">ಬಳಿಕ ಅರಸ ಚಿದ್ಕೀಯನು ಅವನನ್ನು ಕರೆಯಿಸಿ, “ದೇವರಿಂದ ಯಾವುದಾದರು ಸಂದೇಶ ದೊರೆಯಿತೊ?” ಎಂದು ಮನೆಯಲ್ಲಿ ಗುಟ್ಟಾಗಿ ವಿಚಾರಿಸಿದನು. ಯೆರೆಮೀಯನು, “ಹೌದು, ದೊರೆಯಿತು. ತಾವು ಬಾಬಿಲೋನಿನ ಅರಸನ ಕೈಗೆ ಸಿಕ್ಕಿಬೀಳುವಿರಿ,” ಎಂದನು.</verse>
				<verse number="18">ಅಲ್ಲದೆ ಯೆರೆಮೀಯನು ಅರಸ ಚಿದ್ಕೀಯನಿಗೆ, “ನೀವು ನನ್ನನ್ನು ಸೆರೆಯಲ್ಲಿ ಹಾಕಿದ್ದಕ್ಕೆ ನಾನು ನಿಮಗಾಗಲಿ, ನಿಮ್ಮ ಸೇವಕರಿಗಾಗಲಿ, ಇಲ್ಲಿಯ ಜನರಿಗಾಗಲಿ ಮಾಡಿದ ಅಪರಾಧವೇನು?</verse>
				<verse number="19">‘ಬಾಬಿಲೋನಿನ ಅರಸನು ನಿಮಗೂ ಈ ನಾಡಿಗೂ ವಿರುದ್ಧವಾಗಿ ಆಕ್ರಮಣ ನಡೆಸನು’ ಎಂದು ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?</verse>
				<verse number="20">ಎನ್ನೊಡೆಯರೇ, ಅರಸರೇ, ದಯವಿಟ್ಟು ಆಲಿಸಿ: ಲೇಖಕ ಯೆಹೋನಾಥಾನನ ಮನೆಗೆ ನನ್ನನ್ನು ಮತ್ತೆ ಕಳಿಸಬೇಡಿ. ಕಳಿಸಿದರೆ ನಾನು ಅಲ್ಲೇ ಸತ್ತೇನು. ನನ್ನ ಈ ಬಿನ್ನಹವನ್ನು ಅಂಗೀಕರಿಸಿ,” ಎಂದು ಅರಿಕೆಮಾಡಿದನು.</verse>
				<verse number="21">ಆಗ ಅರಸ ಚಿದ್ಕೀಯನು ಅಂತೆಯೆ ಅಪ್ಪಣೆಕೊಡಲು, ಯೆರೆಮೀಯನನ್ನು ರಾಜ್ಯದ ಕಾರಾಗೃಹದ ಅಂಗಳಕ್ಕೆ ಸ್ಥಳಾಂತರಿಸಲಾಯಿತು. ರೊಟ್ಟಿ ಮಾರುಕಟ್ಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದುಕೊಡುತ್ತಿದ್ದರು. ನಗರದ ರೊಟ್ಟಿಯೆಲ್ಲ ತೀರುವ ತನಕ ಹಾಗೆ ಮಾಡುತ್ತಿದ್ದರು. ಯೆರೆಮೀಯನು ರಾಜ್ಯದ ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.</verse>
			</chapter>
			<chapter number="38">
				<verse number="1">ಯೆರೆಮೀಯನು ಜನರೆಲ್ಲರಿಗೆ, “ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: ನಗರದಲ್ಲಿ ನಿಲ್ಲುವವನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ಸಾಯುವನು. ನಗರವನ್ನು ಬಿಟ್ಟುಹೋಗಿ ಬಾಬಿಲೋನಿಯರನ್ನು ಮರೆಹೋಗುವವನು ಬದುಕುವನು. ತನ್ನ ಪ್ರಾಣವೊಂದನ್ನಾದರೂ ಬಾಚಿಕೊಂಡು ಹೋಗಿ ಬದುಕುವನು.</verse>
				<verse number="2">ಬಾಬಿಲೋನಿನ ಅರಸನು ಈ ನಗರವನ್ನು ಆಕ್ರಮಿಸುವನು. ಇದು ಅವನ ವಶವಾಗುವುದು ನಿಶ್ಚಯ” ಎಂದು ಸಾರುತ್ತಿದ್ದನು.</verse>
				<verse number="3">ಮತ್ತಾನನ ಮಗ ಶೆಫತ್ಯ, ಪಷ್ಹೂರನ ಮಗ ಗೆದಲ್ಯ, ಸೆಲೆಮ್ಯನ ಮಗ ಯೂಕಲ, ಹಾಗೂ ಮಲ್ಕೀಯನ ಮಗ ಪಷ್ಹೂರ ಇವರು ಮೇಲೆ ಹೇಳಿದ ಮಾತುಗಳನ್ನು ಕೇಳಿದರು.</verse>
				<verse number="4">ಈ ಪದಾಧಿಕಾರಿಗಳು ಅರಸನ ಬಳಿಗೆ ಬಂದು, “ಒಡೆಯಾ, ಈ ಯೆರೆಮೀಯನಿಗೆ ಮರಣದಂಡನೆಯಾಗಬೇಕು. ಇವನು ನಗರದಲ್ಲಿರುವ ಸೈನಿಕರಿಗೂ ಜನರೆಲ್ಲರಿಗೂ ಇಂಥ ಭವಿಷ್ಯವನ್ನು ನುಡಿಯುತ್ತಾ ಅವರು ಎದೆಗುಂದುವಂತೆ ಮಾಡುತ್ತಿದ್ದಾನೆ. ಅವನು ಹಾರೈಸುವುದು ಜನರ ಕ್ಷೇಮವನ್ನಲ್ಲ ಹಾನಿಯನ್ನೇ,” ಎಂದು ದೂರಿತ್ತರು.</verse>
				<verse number="5">ಅದಕ್ಕೆ ಅರಸ ಚಿದ್ಕೀಯನು, “ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ. ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ,” ಎಂದನು.</verse>
				<verse number="6">ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿದ್ದ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದ ಇಳಿಸಿ ಅಲ್ಲೇ ಬಿಟ್ಟುಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು. ಯೆರೆಮೀಯನು ಅದರೊಳಗೆ ಹೂತುಕೊಂಡನು.</verse>
				<verse number="7">ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಸುಡಾನಿನವನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದುಕೊಂಡನು.</verse>
				<verse number="8">ಅವನು ಅರಮನೆಯಿಂದ ಹೊರಟು, ಬೆನ್ಯಾಮೀನಿನ ಬಾಗಿಲಿನಲ್ಲಿ ಕುಳಿತುಕೊಂಡಿದ್ದ ಅರಸನ ಬಳಿಗೆ ಬಂದು,</verse>
				<verse number="9">“ನನ್ನೊಡೆಯಾ, ಅರಸರೇ, ಈ ಜನರು ಪ್ರವಾದಿ ಯೆರೆಮೀಯನಿಗೆ ಮಾಡಿರುವುದೆಲ್ಲ ದುಷ್ಟಕಾರ್ಯವೇ ಸರಿ. ಅವನನ್ನು ಬಾವಿಯಲ್ಲಿ ಹಾಕಿದ್ದಾರೆ. ಆಹಾರವಿಲ್ಲದೆ ಅವನು ಬಿದ್ದಲ್ಲೇ ಸಾಯುವುದು ಖಚಿತ. ಏಕೆಂದರೆ ನಗರದಲ್ಲಿ ರೊಟ್ಟಿಯೆಲ್ಲಾ ತೀರಿಹೋಗಿದೆ,” ಎಂದು ಅರಿಕೆಮಾಡಿದನು.</verse>
				<verse number="10">ಇದನ್ನು ಕೇಳಿದ ಅರಸನು ಸುಡಾನಿನ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿ ಆಳುಗಳನ್ನು ಕರೆದುಕೊಂಡು ಹೋಗಿ ಪ್ರವಾದಿ ಯೆರೆಮೀಯನು ಸಾಯುವ ಮೊದಲೇ, ಅವನನ್ನು ಬಾವಿಯಿಂದ ಎತ್ತಿಸು,” ಎಂದು ಅಪ್ಪಣೆಕೊಟ್ಟನು.</verse>
				<verse number="11">ಕೂಡಲೇ ಸುಡಾನಿನ ಎಬೆದ್ಮೆಲೆಕನು ಆಳುಗಳನ್ನು ಕರೆದುಕೊಂಡು ಹೋಗಿ, ಅರಮನೆಯನ್ನು ಹೊಕ್ಕು, ಖಜಾನೆಯ ಕೆಳಗಣ ಕೋಣೆಯಿಂದ ಹಳೆಯ ಹರಕು ಚಿಂದಿಪಂದಿಗಳನ್ನು ತೆಗೆದುಕೊಂಡು, ಹಗ್ಗಕ್ಕೆ ಕಟ್ಟಿ ಬಾವಿಯೊಳಗಿದ್ದ ಯೆರೆಮೀಯನಿಗೆ ಮುಟ್ಟಿಸಿದನು.</verse>
				<verse number="12">“ಹಳೆಯ ಈ ಹರಕು ಚಿಂದಿಗಳನ್ನು ಹಗ್ಗಕ್ಕೆ ಸುತ್ತಿ ಕಂಕುಳಲ್ಲಿ ಇಟ್ಟುಕೋ” ಎನ್ನಲು ಯೆರೆಮೀಯನು ಅದರಂತೆಯೇ ಮಾಡಿದನು.</verse>
				<verse number="13">ಈ ಪ್ರಕಾರ ಯೆರೆಮೀಯನನ್ನು ಹಗ್ಗಗಳ ಮೂಲಕ ಸೇದಿಕೊಂಡು ಬಾವಿಯಿಂದ ಮೇಲಕ್ಕೆ ಎತ್ತಿದರು. ಬಳಿಕ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.</verse>
				<verse number="14">ಅರಸ ಚಿದ್ಕೀಯನು ಪ್ರವಾದಿ ಯೆರೆಮೀಯನನ್ನು ಸರ್ವೇಶ್ವರನ ಆಲಯದ ಮೂರನೆಯ ಬಾಗಿಲ ಬಳಿಗೆ ಕರೆತರಿಸಿ, “ನಾನು ನಿನ್ನಲ್ಲಿ ಒಂದು ವಿಷಯವನ್ನು ಕೇಳುತ್ತೇನೆ, ನನಗೆ ಏನನ್ನೂ ಮರೆಮಾಡಬೇಡ,” ಎಂದನು.</verse>
				<verse number="15">ಯೆರೆಮೀಯನು ಚಿದ್ಕೀಯನಿಗೆ, “ನಾನು ತಮಗೆ ಇದ್ದದ್ದನ್ನು ಇದ್ದಹಾಗೆ ಹೇಳಿದರೆ ತಾವು ನನ್ನನ್ನು ಕೊಂದುಹಾಕುವುದು ನಿಶ್ಚಯವಲ್ಲವೆ? ನಾನು ತಮಗೆ ಬುದ್ಧಿವಾದ ಹೇಳಿದರೆ ತಾವು ಕೇಳುವುದಿಲ್ಲ,” ಎಂದು ಉತ್ತರಕೊಟ್ಟನು.</verse>
				<verse number="16">ಅದಕ್ಕೆ ಅರಸ ಚಿದ್ಕೀಯನು, “ನಮಗೆ ಈ ಪ್ರಾಣವನ್ನು ದಯಪಾಲಿಸಿದ ಸರ್ವೇಶ್ವರನ ಜೀವದಾಣೆ, ನಾನು ನಿನ್ನನ್ನು ಕೊಂದುಹಾಕುವುದಿಲ್ಲ. ನಿನ್ನ ಪ್ರಾಣವನ್ನು ಹುಡುಕುವ ಈ ಜನರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ,” ಎಂದು ಗುಟ್ಟಾಗಿ ಪ್ರಮಾಣಮಾಡಿ ಹೇಳಿದನು.</verse>
				<verse number="17">ಆಗ ಯೆರೆಮೀಯನು, “ಸೇನಾಧೀಶ್ವರ ಸರ್ವೇಶ್ವರನೂ ಇಸ್ರಯೇಲರ ದೇವರೂ ಆದ ಸ್ವಾಮಿ ಹೀಗೆನ್ನುತ್ತಾರೆ: ತಾವು ಬಾಬಿಲೋನಿಯದ ಅರಸನ ಪದಾಧಿಕಾರಿಗಳ ಮೊರೆಹೊಕ್ಕರೆ ತಮ್ಮ ಪ್ರಾಣ ಉಳಿಯುವುದು. ಈ ನಗರ ಬೆಂಕಿ ಇಂದ ಸುಟ್ಟುಹೋಗದು, ತಾವೂ ತಮ್ಮ ಮನೆಯವರೂ ಮನೆತನದವರೂ ಬದುಕುವಿರಿ.</verse>
				<verse number="18">ತಾವು ಬಾಬಿಲೋನಿಯದ ಅರಸನ ಪದಾಧಿಕಾರಿಗಳಿಗೆ ಮೊರೆಹೋಗದಿದ್ದರೆ ಈ ನಗರವು ಬಾಬಿಲೋನಿನವರ ಕೈವಶವಾಗುವುದು. ಅವರು ಇದನ್ನು ಬೆಂಕಿ ಇಂದ ಸುಟ್ಟುಬಿಡುವರು. ತಾವು ಅವರ ಕೈಯಿಂದ ತಪ್ಪಿಸಿಕೊಳ್ಳಲಾರಿರಿ,” ಎಂದು ಹೇಳಿದನು.</verse>
				<verse number="19">ಇದನ್ನು ಕೇಳಿದ ಅರಸ ಚಿದ್ಕೀಯನು ಯೆರೆಮೀಯನಿಗೆ, “ಬಾಬಿಲೋನಿಯದವರು ತಮ್ಮನ್ನು ಮರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸಬಹುದು. ಅವರು ನನ್ನನ್ನು ಹಿಂಸಿಸಬಹುದು ಎಂಬ ಸಂಶಯ ನನಗಿದೆ,” ಎಂದು ಉತ್ತರಕೊಟ್ಟನು.</verse>
				<verse number="20">ಇದನ್ನು ಕೇಳಿದ ಯೆರೆಮೀಯನು, “ಇಲ್ಲ, ತಮ್ಮನ್ನು ಅವರ ಕೈಗೆ ಒಪ್ಪಿಸುವುದಿಲ್ಲ. ದಯವಿಟ್ಟು ನಾನು ತಮಗೆ ಹೇಳಿರುವ ಸರ್ವೇಶ್ವರನ ವಾಕ್ಯದಂತೆ ನಡೆದುಕೊಳ್ಳಿ. ನಡೆದುಕೊಂಡರೆ ತಮ್ಮ ಪ್ರಾಣ ಉಳಿಯುವುದು, ಒಳ್ಳೆಯದಾಗುವುದು.</verse>
				<verse number="21">ತಾವು ಶತ್ರುವನ್ನು ಮರೆಹೋಗೆನು ಎನ್ನುವುದಾದರೆ ಸರ್ವೇಶ್ವರ ತಮ್ಮ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾರೆ.</verse>
				<verse number="22">ಜುದೇಯದ ಅರಸನ ಮನೆಯಲ್ಲಿ ಉಳಿದಿರುವ ಎಲ್ಲ ಮಹಿಳೆಯರನ್ನು ಬಾಬಿಲೋನಿಯದ ಅರಸನ ದಳಪತಿಗಳ ಬಳಿಗೆ ತರಲಾಗುವುದು. ಆ ಮಹಿಳೆಯರೇ: ‘ಆಪ್ತ ಮಿತ್ರರು ನಿನ್ನನ್ನು ವಂಚಿಸಿ ಒಳಪಡಿಸಿಕೊಂಡರು; ನಿನ್ನ ಕಾಲುಗಳು ಬದಿಯಲ್ಲಿ ಹೂತಿರುವುದನ್ನು ನೋಡಿಯೂ ನಿನ್ನಿಂದ ದೂರವಾದರು’ ಎಂದು ತಮ್ಮನ್ನು ನಿಂದಿಸುವರು.</verse>
				<verse number="23">ತಮ್ಮ ಎಲ್ಲ ಮಡದಿಯರನ್ನೂ ಮಕ್ಕಳನ್ನೂ ಬಾಬಿಲೋನಿಯರ ಬಳಿಗೆ ತರಲಾಗುವುದು. ತಾವು ತಪ್ಪಿಸಿಕೊಳ್ಳಲಾಗದೆ ಬಾಬಿಲೋನಿಯದ ಅರಸನ ಕೈಗೆ ಸಿಕ್ಕಿಕೊಳ್ಳುವಿರಿ. ಈ ನಗರವು ತಮ್ಮ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು,” ಎಂದು ಹೇಳಿದನು.</verse>
				<verse number="24">ಆಗ ಚಿದ್ಕೀಯನು ಯೆರೆಮೀಯನಿಗೆ, “ಈ ಮಾತುಗಳು ಯಾರಿಗೂ ತಿಳಿಯದಿರಲಿ, ಜೋಕೆ! ತಿಳಿಯದಿದ್ದರೆ ನೀನು ಸಾಯುವುದಿಲ್ಲ.</verse>
				<verse number="25">ನಾನು ನಿನ್ನ ಸಂಗಡ ಮಾತಾಡಿದ ಸುದ್ದಿಯನ್ನು ಪದಾಧಿಕಾರಿಗಳು ಕೇಳಿ ನಿನ್ನ ಬಳಿಗೆ ಬಂದು, ‘ಅರಸನಿಗೆ ಏನು ಹೇಳಿದೆ? ನಮಗೆ ತಿಳಿಸು, ನಮಗೆ ಮರೆಮಾಡದೆ ತಿಳಿಸಿದರೆ ನಿನ್ನನ್ನು ಕೊಲ್ಲುವುದಿಲ್ಲ. ಅರಸನಿಗೆ ಏನು ಹೇಳಿದೆ? ತಿಳಿಸು, ಎಂದು ಪ್ರಶ್ನೆ ಹಾಕಿದರೆ</verse>
				<verse number="26">ನೀನು ಅವರಿಗೆ, ‘ಯೆಹೋನಾಥಾನನ ಮನೆಗೆ ನನ್ನನ್ನು ಮರಳಿ ಸೇರಿಸಬೇಡ. ಅಲ್ಲೇ ಸತ್ತೇನು ಎಂದು ಅರಸನಲ್ಲಿ ಬಿನ್ನಹ ಮಾಡಿಕೊಂಡೆ’ ಎಂಬುದಾಗಿ ಹೇಳು,” ಎಂದು ಅಪ್ಪಣೆಮಾಡಿದನು.</verse>
				<verse number="27">ಕೆಲವು ದಿನಗಳಾದ ಮೇಲೆ ಎಲ್ಲ ಪದಾಧಿಕಾರಿಗಳು ಯೆರೆಮೀಯನ ಬಳಿಗೆ ಬಂದು ಹಾಗೆಯೇ ಪ್ರಶ್ನೆಮಾಡಿದರು. ಅವನು ಅರಸನ ಅಪ್ಪಣೆಯಂತೆಯೇ ಉತ್ತರಕೊಟ್ಟನು. ಅಷ್ಟಕ್ಕೆ ಮಾತು ಮುಗಿದು ಅವನಿಂದ ಏನೂ ತಿಳಿದುಕೊಳ್ಳಲಾಗಲಿಲ್ಲ.</verse>
				<verse number="28">ಜೆರುಸಲೇಮ್ ಶತ್ರುವಶವಾಗುವ ತನಕ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.</verse>
			</chapter>
			<chapter number="39">
				<verse number="1">ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಲ್ಲಿ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ಸಕಲ ಸೈನ್ಯಸಮೇತ ಬಂದು ಜೆರುಸಲೇಮನ್ನು ಮುತ್ತಿದನು.</verse>
				<verse number="2">ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಬತ್ತನೆಯ ದಿನದಲ್ಲಿ ನಗರದ ಪೌಳಿಗೋಡೆ ಒಡಕುಬಿದ್ದು ಜೆರುಸಲೇಮ್ ಶತ್ರುವಶವಾಯಿತು.</verse>
				<verse number="3">ನೇರ್ಗಲ್‍ಸರೆಚರ್, ಸಮ್ಗರ್‍ನೆಬೊ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಜೋಯಿಸರ ಮುಖ್ಯಸ್ಥ ನೇರ್ಗಲ್‍ಸರೆಚರ್, ಹೀಗೆ ಬಾಬಿಲೋನಿಯದ ಅರಸನ ಎಲ್ಲ ಪದಾಧಿಕಾರಿಗಳು ಪುರಪ್ರವೇಶಮಾಡಿ ಮಧ್ಯಮದ್ವಾರದೊಳಗೆ ಕುಳಿತುಕೊಂಡರು</verse>
				<verse number="4">ಇವರನ್ನು ನೋಡಿ, ಜುದೇಯದ ಅರಸ ಚಿದ್ಕೀಯನು ಮತ್ತು ಸಮಸ್ತ ಸೈನಿಕರು ಅದೇ ರಾತ್ರಿಯಲ್ಲಿ ಹೊರಟು, ಅರಸನ ಉದ್ಯಾನ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ನಗರವನ್ನು ಬಿಟ್ಟು, ಅರಾಬಾ ಎಂಬ ಕಣಿವೆ ಪ್ರದೇಶದ ಕಡೆಗೆ ಪಲಾಯನ ಮಾಡಿದರು.</verse>
				<verse number="5">ಬಾಬಿಲೋನಿಯದ ಸೈನಿಕರು ಅವರನ್ನು ಹಿಂದಟ್ಟುತ್ತಾ ಜೆರಿಕೋವಿನ ಬೈಲಿನಲ್ಲಿ ಚಿದ್ಕೀಯನನ್ನು ಹಿಡಿದರು. ಹಮಾತ್ ನಾಡಿನ ರಿಬ್ಲದಲ್ಲಿದ್ದ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಬಳಿಗೆ ಅವನನ್ನು ತೆಗೆದುಕೊಂಡು ಬಂದರು.</verse>
				<verse number="6">ಆ ಬಾಬಿಲೋನಿಯದ ಅರಸನು ಅಲ್ಲೆ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿದನು. ಅವನ ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿದನು. ಜುದೇಯದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು.</verse>
				<verse number="7">ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ, ಬೇಡಿಹಾಕಿಸಿ, ಬಾಬಿಲೋನಿಗೆ ಸಾಗಿಸಿದನು.</verse>
				<verse number="8">ಅರಮನೆಯನ್ನೂ ಪ್ರಜೆಗಳ ಮನೆಗಳನ್ನೂ ಬಾಬಿಲೋನಿಯದವರು ಬೆಂಕಿಯಿಂದ ಸುಟ್ಟು ಜೆರುಸಲೇಮಿನ ಸುತ್ತಣವಿದ್ದ ಗೋಡೆಗಳನ್ನು ಕೆಡವಿದರು.</verse>
				<verse number="9">ರಕ್ಷಾದಳದ ನಾಯಕನಾದ ನೆಬೂಜರದಾನನು ನಗರದಲ್ಲಿ ಉಳಿದಿದ್ದವರನ್ನು ಹಾಗು ಮೊದಲೇ ತನ್ನನ್ನು ಮರೆಹೊಕ್ಕಿದವರನ್ನು ಮತ್ತಿತರ ಕೆಲಸಗಾರರನ್ನೆಲ್ಲಾ ಬಾಬಿಲೋನಿಗೆ ಸೆರೆ ಒಯ್ದನು.</verse>
				<verse number="10">ಆದರೆ ಏನೂ ಇಲ್ಲದ ಬಡಜನರನ್ನು ಜುದೇಯದ ನಾಡಿನಲ್ಲೆ ಬಿಟ್ಟು ಅವರಿಗೆ ಹೊಲತೋಟಗಳನ್ನು ಕೊಟ್ಟನು.</verse>
				<verse number="11">ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ರಕ್ಷಾದಳದ ನಾಯಕ ನೆಬೂಜರದಾನನಿಗೆ,</verse>
				<verse number="12">“ಇವನನ್ನು ಕರೆದುಕೊಂಡುಹೋಗಿ ಚೆನ್ನಾಗಿ ನೋಡಿಕೊ. ಯಾವ ಹಾನಿಯನ್ನು ಮಾಡಕೂಡದು. ಬೇಡುವುದನ್ನೆಲ್ಲ ಕೊಡು,” ಎಂದು ಆಜ್ಞಾಪಿಸಿದನು.</verse>
				<verse number="13">ಅಂತೆಯೇ ನೆಬೂಜರದಾನನು ಹಾಗು ಕಂಚುಕಿಯರ ಮುಖ್ಯಸ್ಥ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥ ನೇರ್ಗಲ್‍ಸರೆಚರ್ ಮತ್ತು ಬಾಬಿಲೋನಿಯರ ಅರಸನ ಎಲ್ಲ ಪದಾಧಿಕಾರಿಗಳು ಸೇರಿ ಯೆರೆಮೀಯನನ್ನು ಕಾರಾಗೃಹದಿಂದ ಕರೆತರಿಸಿದರು.</verse>
				<verse number="14">ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಅವನನ್ನು ಒಪ್ಪಿಸಿ ಮನೆಗೆ ಕರೆದುಕೊಂಡುಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ವಾಡಿಕೆಯ ಪ್ರಕಾರ ಜನರ ನಡುವೆ ವಾಸಮಾಡಿದನು.</verse>
				<verse number="15">ಯೆರೆಮೀಯನು ಇನ್ನೂ ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಸರ್ವೇಶ್ವರನ ಈ ವಾಣಿ ಕೇಳಿಸಿತು:</verse>
				<verse number="16">ನೀನು ಹೋಗಿ ಸುಡಾನಿನ ಎಬೆದ್ಮೆಲೆಕನಿಗೆ ಹೀಗೆ ತಿಳಿಸು: “ಈ ಇಸ್ರಯೇಲರ ದೇವರೂ ಸೇನಾಧೀಶ್ವರನೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ - ನಾನು ನುಡಿದ ಮೇಲನ್ನು ಅಲ್ಲ, ಕೇಡನ್ನೇ ಈ ನಗರದ ಮೇಲೆ ಬರಮಾಡುವೆನು. ಅದು ನಿನ್ನ ಕಣ್ಣೆದುರಿಗೇ ಆ ದಿನದಂದು ನಡೆಯುವುದು.</verse>
				<verse number="17">ಆದರೆ ಆ ದಿನದಲ್ಲಿ ನಿನ್ನನ್ನು ನಾನು ಉದ್ಧರಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ. ನೀನು ಯಾರಿಗಾಗಿ ಭಯಪಡುತ್ತಿಯೋ ಅವರ ಕೈಗೆ ಸಿಕ್ಕುವುದಿಲ್ಲ.</verse>
				<verse number="18">ನೀನು ನನ್ನಲ್ಲಿ ಭರವಸೆಯಿಟ್ಟ ಕಾರಣ ನಿನ್ನನ್ನು ರಕ್ಷಿಸಿಯೇ ರಕ್ಷಿಸುವೆನು. ನೀನು ಕತ್ತಿಗೆ ತುತ್ತಾಗಲಾರೆ. ಅದರ ಬಾಯಿಂದ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ. ಇದು ಸರ್ವೇಶ್ವರನಾದ ನನ್ನ ವಾಣಿ.”</verse>
			</chapter>
			<chapter number="40">
				<verse number="1">ಸರ್ವೇಶ್ವರನ ವಾಣಿ ಮತ್ತೊಮ್ಮೆ ಯೆರೆಮೀಯನಿಗೆ ಕೇಳಿಸಿತು. ಇಷ್ಟರೊಳಗೆ ರಕ್ಷಾದಳದ ನಾಯಕ ನೆಬೂಜರದಾನನು ಜೆರುಸಲೇಮಿನವರ ಮತ್ತು ಜುದೇಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಯೆರೆಮೀಯನು ಕೂಡ ಸಂಕೋಲೆಗಳಿಂದ ಬಂಧಿತನಾಗಿರುವುದನ್ನು ಕಂಡು ಅವನನ್ನು ರಾಮದ ಬಳಿ ಬಿಡುಗಡೆ ಮಾಡಿದನು.</verse>
				<verse number="2">ಆಗ ರಕ್ಷಾದಳದ ಆ ನಾಯಕ ಯೆರೆಮೀಯನನ್ನು ಕರೆಯಿಸಿ, “ನಿನ್ನ ದೇವರಾದ ಸರ್ವೇಶ್ವರನು ಈ ನಾಡಿಗೆ ಇಂಥ ಕೇಡು ಬಂದೊದಗಲಿ ಎಂದು ಶಾಪಹಾಕಿದ್ದ.</verse>
				<verse number="3">ಆ ಶಾಪ ಈಡೇರುವಂತೆ ಮಾಡಿದ್ದಾನೆ. ನೀವು ಆತನ ವಾಣಿಗೆ ಕಿವಿಗೊಡದೆ ಪಾಪಮಾಡಿದ್ದರಿಂದ ಇದು ನಿಮಗೆ ಸಂಭವಿಸಿದೆ.</verse>
				<verse number="4">ನೋಡು, ನಿನ್ನ ಕೈಗೆ ಹಾಕಿದ್ದ ಬೇಡಿಗಳನ್ನು ಈ ದಿನ ತೆಗೆಸಿದ್ದೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸಿದ್ದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ನನ್ನ ಸಂಗಡ ಬಾಬಿಲೋನಿಗೆ ಬರುವುದಕ್ಕೆ ಮನಸ್ಸಿಲ್ಲದಿದ್ದರೆ ಬರಬೇಕಾಗಿಲ್ಲ. ಇಗೋ ದೇಶವೆಲ್ಲ ನಿನ್ನ ಕಣ್ಣೆದುರಿಗಿದೆ. ನಿನಗೆ ಯಾವ ಕಡೆಗೆ ಹೋಗುವುದು ಸರಿಯೆಂದು, ಒಳ್ಳೆಯದೆಂದು ತೋರುತ್ತದೋ ಆ ಕಡೆಗೆ ಹೋಗು,” ಎಂದು ಹೇಳಿದನು.</verse>
				<verse number="5">ಯೆರೆಮೀಯನು ಉತ್ತರಕೊಡದೆ ಇರಲು ನೆಬೂಜರದಾನನು ಅವನಿಗೆ, “ಬಾಬಿಲೋನಿಯದ ಅರಸನು, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ಜುದೇಯದ ನಗರಗಳಿಗೆ ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆ. ಅವನ ಬಳಿಗೆ ಹೋಗು, ಅವನ ಹತ್ತಿರ ಜನರ ನಡುವೆ ವಾಸಮಾಡುವ ಇಲ್ಲವೆ ಎಲ್ಲಿಗೆ ಬೇಕಾದರೂ ಹೋಗು” ಎಂದು ಹೇಳಿ ಬುತ್ತಿಯನ್ನೂ ಬಹುಮಾನವನ್ನೂ ಕೊಡಿಸಿ ಅವನನ್ನು ಕಳಿಸಿಬಿಟ್ಟನು.</verse>
				<verse number="6">ಆಗ ಯೆರೆಮೀಯನು ಅಹೀಕಾಮನ ಮಗ ಗೆದಲ್ಯನು ಇದ್ದ ಮಿಚ್ಪಕ್ಕೆ ಹೋಗಿ ಅವನೊಡನೆ ಹಾಗು ನಾಡಿನ ಉಳಿದ ಜನರ ನಡುವೆ ವಾಸಮಾಡಿದನು.</verse>
				<verse number="7">ಬಾಬಿಲೋನಿಯದ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ನಾಡಿನ ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆಂಬ ಸುದ್ದಿ ಹಾಗು ಬಾಬಿಲೋನಿಗೆ ಸೆರೆಹೋಗದ ನಾಡಿಗರಲ್ಲಿ ಬಡವರಾದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದ್ದಾನೆಂಬ ಸುದ್ದಿ ಹರಡಿತು. ಕಾಡುಮೇಡುಗಳಲ್ಲಿದ್ದ ಎಲ್ಲ ಯಹೂದ್ಯ ಸೈನಿಕರೂ ಸೇನಾಪತಿಗಳೂ ಇದನ್ನು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಹೋದರು.</verse>
				<verse number="8">ಹೀಗೆ ನೆತನ್ಯನ ಮಗನಾದ ಇಷ್ಮಾಯೇಲ, ಕಾರೇಹನ ಮಕ್ಕಳಾದ ಯೋಹಾನಾನ ಯೋನಾಥಾನ, ತನ್ಹುಮೆತನ ಮಗನಾದ ಸೆರಾಯ, ಮಾಕಾ ಊರಿನವನ ಮಗನಾದ ಯೆಜನ್ಯ ನೆಟೋಫದವನಾದ ಏಫಯನ ಮಕ್ಕಳು ಗೆದಲ್ಯನ ಬಳಿಗೆ ಹೋದರು.</verse>
				<verse number="9">ಇವರಿಗೂ ಇವರ ಜನರಿಗೂ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನು, “ಬಾಬಿಲೋನಿಯರಿಗೆ ಅಧೀನರಾಗಿರಲು ಹೆದರಬೇಡಿ, ಬಾಬಿಲೋನಿನ ಅರಸನಿಗೆ ಅಧೀನರಾಗಿ ಅಲ್ಲಿಯೇ ವಾಸಮಾಡಿ. ಆಗ ನಿಮಗೆ ಒಳ್ಳೆಯದಾಗುವುದು.</verse>
				<verse number="10">ನಾನಂತು ಮಿಚ್ಪದಲ್ಲಿ ವಾಸವಾಗಿರುವೆನು. ನಮ್ಮ ಬಳಿಗೆ ಬರುವ ಬಾಬಿಲೋನಿಯರ ಮುಂದೆ ನಿಮ್ಮ ಪ್ರತಿನಿಧಿಯಾಗಿರುವೆನು. ನೀವು ಹೋಗಿ ದ್ರಾಕ್ಷಾರಸ, ಹಣ್ಣು, ಎಣ್ಣೆ ಮುಂತಾದವುಗಳನ್ನು ಸಂಗ್ರಹಿಸಿ ನಿಮ್ಮ ಉಗ್ರಾಣಗಳಲ್ಲಿ ತುಂಬಿಸಿಡಿ. ನೀವು ಹಿಡಿದಿರುವ ಪಟ್ಟಣಗಳಲ್ಲೆ ವಾಸವಾಗಿರಿ,” ಎಂದು ಶಪಥಮಾಡಿ ಹೇಳಿದನು.</verse>
				<verse number="11">ಇದಲ್ಲದೆ, ಅಮ್ಮೋನ್, ಮೋವಾಬ್, ಎದೋಮ್ ಮೊದಲಾದ ನಾಡುಗಳಲ್ಲಿ ಚದರಿಹೋಗಿದ್ದ ಯೆಹೂದ್ಯರೆಲ್ಲರು, ಬಾಬಿಲೋನಿನ ಅರಸನು ಯೆಹೂದ್ಯರಲ್ಲಿ ಕೆಲವರನ್ನು ಉಳಿಸಿ, ಅವರಿಗೆ ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನನ್ನು ರಾಜ್ಯಪಾಲನನ್ನಾಗಿ ನೇಮಿಸಿದ್ದಾನೆಂಬ ಸುದ್ದಿಯನ್ನು ಕೇಳಿದರು.</verse>
				<verse number="12">ತಾವು ಹೊರದೂಡಲ್ಪಟ್ಟು ವಾಸಮಾಡುತ್ತಿದ್ದ ಎಲ್ಲಾ ಊರುಗಳಿಂದ ಜುದೇಯಕ್ಕೆ ಹಿಂದಿರುಗಿದರು. ಮಿಚ್ಪದಲ್ಲಿ ವಾಸವಾಗಿದ್ದ ಗೆದಲ್ಯನ ಬಳಿಗೆ ಬಂದು ಸೇರಿಕೊಂಡರು. ದ್ರಾಕ್ಷಾರಸವನ್ನೂ ಹಣ್ಣುಹಂಪಲುಗಳನ್ನೂ ಹೇರಳವಾಗಿ ಕೂಡಿಸಿಕೊಂಡರು.</verse>
				<verse number="13">ತರುವಾಯ ಕಾರೇಹನ ಮಗ ಯೋಹಾನಾನನು ಹಾಗು ಕಾಡುಮೇಡುಗಳಲ್ಲಿ ವಾಸಮಾಡುತ್ತಿದ್ದ ಎಲ್ಲ ಸೇನಾಪತಿಗಳು ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಹೋದರು.</verse>
				<verse number="14">“ಅಮ್ಮೋನ್ಯರ ಅರಸ ಬಾಲೀಸನು ನಿಮ್ಮನ್ನು ಕೊಲ್ಲುವುದಕ್ಕಾಗಿ ನೆತನ್ಯನ ಮಗ ಇಷ್ಮಾಯೇಲನನ್ನು ಕಳಿಸಿದ್ದಾನೆ ಎಂಬುದು ನಿಮಗೆ ಗೊತ್ತಿದೆಯೇ?” ಎಂದು ಕೇಳಿದರು. ಆದರೆ ಅಹೀಕಾಮನ ಮಗ ಗೆದಲ್ಯನು ಅವರನ್ನು ನಂಬಲಿಲ್ಲ.</verse>
				<verse number="15">ಆಗ ಕಾರೇಹನ ಮಗ ಯೋಹಾನಾನನು ಮಿಚ್ಪದಲ್ಲಿದ್ದ ಗೆದಲ್ಯನಿಗೆ, “ನಾನು ಹೋಗಿ ನೆತನ್ಯನ ಮಗ ಇಷ್ಮಾಯೇಲನನ್ನು ಕೊಲ್ಲಲು ಅಪ್ಪಣೆಯಾಗಬೇಕು. ಇದು ನಿಮ್ಮ ಅಪ್ಪಣೆಯೆಂದು ಯಾರಿಗೂ ತಿಳಿದುಬರುವುದಿಲ್ಲ. ಅವನು ನಿಮ್ಮನ್ನು ಕೊಂದರೆ ನಿಮ್ಮ ಆಶ್ರಯದ ಯೆಹೂದ್ಯರೆಲ್ಲರು ದಿಕ್ಕಾಪಾಲಾಗಿ ಜುದೇಯದ ಶೇಷವೂ ನಿಶ್ಶೇಷವಾಗುವುದು. ಹೀಗೆ ಆಗುವುದು ಸರಿಯೇ?” ಎಂದು ಗುಟ್ಟಾಗಿ ವಿನಂತಿಸಿದನು.</verse>
				<verse number="16">ಅದಕ್ಕೆ ಅಹೀಕಾಮನ ಮಗ ಗೆದಲ್ಯನು, “ನೀನು ಹಾಗೆ ಮಾಡಲೆಕೂಡದು. ನೀನು ಇಷ್ಮಾಯೇಲನ ವಿಷಯವಾಗಿ ಹೇಳಿದ್ದು ಸುಳ್ಳು,” ಎಂದು ಉತ್ತರಿಸಿದನು.</verse>
			</chapter>
			<chapter number="41">
				<verse number="1">ಏಳನೆಯ ತಿಂಗಳಿನಲ್ಲಿ ಇಷ್ಮಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗ ಗೆದಲ್ಯನು ವಾಸವಾಗಿದ್ದ ಮಿಚ್ಪಕ್ಕೆ ಬಂದನು. ಈತನು ರಾಜವಂಶದವನು, ಎಲೀಷಾಮನ ಮೊಮ್ಮಗನು, ನೆತನ್ಯನ ಮಗನು ಹಾಗು ಅರಸನ ಪದಾಧಿಕಾರಿಗಳಲ್ಲಿ ಒಬ್ಬನು. ಅಲ್ಲಿ ಗೆದಲ್ಯನೊಂದಿಗೆ ಅವರೆಲ್ಲರು ಊಟಮಾಡುತ್ತಿದ್ದಾಗ,</verse>
				<verse number="2">ನೆತಲ್ಯನ ಮಗ ಇಷ್ಮಾಯೇಲನು ಮತ್ತು ಅವನೊಂದಿಗಿದ್ದ ಹತ್ತು ಜನರು ಎದ್ದು ಅಹೀಕಾಮನ ಮಗ, ಶಾಫಾನನ ಮೊಮ್ಮಗ, ಹಾಗು ಬಾಬಿಲೋನಿಯದ ಅರಸನಿಂದ ನಾಡಿನ ರಾಜ್ಯಪಾಲನಾಗಿ ನೇಮಕಗೊಂಡಿದ್ದ ಆ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದರು.</verse>
				<verse number="3">ಇದಲ್ಲದೆ, ಆ ಇಷ್ಮಾಯೇಲನು ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನು ಹಾಗು ಅಲ್ಲಿ ಸಿಕ್ಕಿದ ಬಾಬಿಲೋನಿಯದ ಸೈನಿಕರನ್ನು ಹತಿಸಿದನು.</verse>
				<verse number="4">ಗೆದಲ್ಯನನ್ನು ಕೊಂದು ಎರಡು ದಿನಗಳಾಗಿದ್ದರೂ ಆ ಸಂಗತಿ ಇನ್ನು ಯಾರಿಗೂ ತಿಳಿದಿರಲಿಲ್ಲ.</verse>
				<verse number="5">ಇಂತಿರಲು ಗಡ್ಡ ಬೋಳಿಸಿ, ಬಟ್ಟೆ ಹರಿದು, ಗಾಯಮಾಡಿಕೊಂಡಿದ್ದ ಎಂಬತ್ತು ಜನರು ಶೆಕೆಮ್, ಶಿಲೋ, ಸಮಾರಿಯ ಎಂಬ ಊರುಗಳಿಂದ ಬಂದು, ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಸರ್ವೇಶ್ವರನ ಆಲಯಕ್ಕೆ ಹೋಗುತ್ತಿದ್ದರು.</verse>
				<verse number="6">ಆಗ ನೆತನ್ಯನ ಮಗ ಇಷ್ಮಾಯೇಲನು ಮಿಚ್ಪದಿಂದ ಅವರ ಕಡೆಗೆ ಹೊರಟು ದಾರಿಯುದ್ದಕ್ಕೂ ಅಳುತ್ತಾ ನಡೆದುಬಂದನು. ಅವರನ್ನು ಎದುರುಗೊಂಡು, ‘ಅಹೀಕಾಮನ ಮಗ ಗೆದಲ್ಯನ ಬಳಿಗೆ ಬನ್ನಿ’ ಎಂದು ಹೇಳಿದನು.</verse>
				<verse number="7">ಅವರು ಊರೊಳಕ್ಕೆ ಬಂದಮೇಲೆ ನೆತನ್ಯನ ಮಗ ಇಷ್ಮಾಯೇಲನೂ ಅವನ ಸಂಗಡಿಗರೂ ಅವರನ್ನು ಕೊಂದು ಬಾವಿಯಲ್ಲಿ ಹಾಕಿದರು.</verse>
				<verse number="8">ಆದರೆ ಆ ಎಂಬತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡಿ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ ಇವುಗಳನ್ನು ಕಾಡಿನಲ್ಲಿ ರಾಶಿಯಾಗಿ ಬಚ್ಚಿಟ್ಟಿದ್ದೇವೆ,” ಎಂದು ಬಿನ್ನವಿಸಿದರು. ಈ ಕಾರಣ ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.</verse>
				<verse number="9">“ಇಷ್ಮಾಯೇಲನು ತಾನು ಕೊಂದವರ ಶವಗಳನ್ನು ಗೆದಲ್ಯನ ಶವದ ಮೇಲೆ ಹಾಕಿಸಿದನು. ಹೀಗೆ ಹಾಕಿಸಿದ ಆ ಬಾವಿಯು ಇಸ್ರಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ ಆಗಿತ್ತು. ಆ ಬಾವಿಯನ್ನು ನೆತನ್ಯನ ಮಗ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು.</verse>
				<verse number="10">ಬಳಿಕ ನೆತನ್ಯನ ಮಗ ಇಷ್ಮಾಯೇಲನು ರಾಜಕುವರಿಯರನ್ನು ಮತ್ತು ರಕ್ಷಾದಳದ ನಾಯಕನಾದ ನೆಬೂಜರದಾನನನ್ನು ಆಹೀಕಾಮನ ಮಗ ಗೆದಲ್ಯನಿಗೆ ಒಪ್ಪಿಸಿದ್ದ ಮಿಚ್ಪದ ಜನ ಶೇಷವನ್ನು, ಹೀಗೆ ಮಿಚ್ಪದಲ್ಲಿ ಅಳಿದುಳಿದಿದ್ದ ಎಲ್ಲರನ್ನು ಸೆರೆಹಿಡಿದು ಅಮ್ಮೋನ್ಯರ ನಾಡಿಗೆ ಹೊರಟನು.</verse>
				<verse number="11">ಕಾರೇಹನ ಮಗ ಯೋಹಾನಾನನು ಹಾಗು, ಅವನೊಂದಿಗಿದ್ದ ಎಲ್ಲ ಸೇನಾಪತಿಗಳು ನೆತನ್ಯನ ಮಗ ಇಷ್ಮಾಯೇಲನು ಮಾಡಿದ ಎಲ್ಲ ಕೆಡುಕನ್ನು ಕೇಳಿದರು.</verse>
				<verse number="12">ತಮ್ಮ ಸೈನಿಕರನ್ನೆಲ್ಲ ಕರೆದುಕೊಂಡು ನೆತನ್ಯನ ಮಗನಾದ ಇಷ್ಮಾಯೇಲನ ಮೇಲೆ ಯುದ್ಧಕ್ಕೆ ಹೊರಟು ಗಿಬ್ಯೋನಿನ ದೊಡ್ಡ ಕೆರೆಯ ಹತ್ತಿರ ಅವನನ್ನು ಹಿಡಿದರು.</verse>
				<verse number="13">ಆಗ ಇಷ್ಮಾಯೇಲನ ಸಂಗಡವಿದ್ದ ಸೆರೆಯಾಳುಗಳೆಲ್ಲರು ಕಾರೇಹನ ಮಗ ಯೋಹಾನಾನನನ್ನು ಅವನೊಂದಿಗಿದ್ದ ಎಲ್ಲ ಸೇನಾಪತಿಗಳನ್ನೂ ನೋಡಿ ಸಂತೋಷಪಟ್ಟರು.</verse>
				<verse number="14">ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ಒಯ್ದಿದ್ದ ಜನರೆಲ್ಲರು ಹಿಂದಿರುಗಿಹೋಗಿ ಕಾರೇಹನ ಮಗ ಯೋಹಾನಾನನನ್ನೂ ಸೇರಿಕೊಂಡರು.</verse>
				<verse number="15">ನೆತನ್ಯನ ಮಗ ಇಷ್ಮಾಯೇಲನಾದರೋ ಎಂಟುಮಂದಿಯ ಸಂಗಡ ಯೋಹಾನಾನನಿಂದ ತಪ್ಪಿಸಿಕೊಂಡು ಅಮ್ಮೋನ್ಯರನ್ನು ಮರೆಹೊಕ್ಕನು.</verse>
				<verse number="16">ಆಗ ಕಾರೇಹನ ಮಗ ಯೋಹಾನಾನನು ಮತ್ತು ಅವನೊಂದಿಗಿದ್ದ ಸೇನಾಪತಿಗಳೆಲ್ಲರು ತಾವು ನೆತನ್ಯನ ಮಗ ಇಷ್ಮಾಯೇಲನ ಕೈಯಿಂದ ತಪ್ಪಿಸಿ ಗಿಬ್ಯೋನಿನಿಂದ ತಂದಿದ್ದ ಜನರನ್ನು ಅಂದರೆ ಯೋಧರು, ಮಹಿಳೆಯರು, ಮಕ್ಕಳು, ಕಂಚುಕಿಗಳು, ಹೀಗೆ ಇಷ್ಮಾಯೇಲನು ಅಹೀಕಾಮನ ಮಗ ಗೆದಲ್ಯನನ್ನು ಕೊಂದ ಬಳಿಕ ಜನರನ್ನೆಲ್ಲರನ್ನು ಕರೆದುಕೊಂಡು ಹೊರಟರು.</verse>
				<verse number="17">ಬಾಬಿಲೋನಿಯರ ಭಯದಿಂದ ಈಜಿಪ್ಟಿಗೆ ವಲಸೆಹೋಗಬೇಕೆಂದು ಬೆತ್ಲೆಹೇಮಿನ ಸಮೀಪದಲ್ಲಿರುವ ಗೇರುಥ್ ಕಿಮ್ಹಾಮಿನಲ್ಲಿ ಇಳಿದುಕೊಂಡರು.</verse>
				<verse number="18">ಬಾಬಿಲೋನಿಯದ ಅರಸನಿಂದ ನಾಡಿನ ರಾಜ್ಯಪಾಲನಾಗಿ ನೇಮಕಗೊಂಡಿದ್ದ ಅಹೀಕಾಮನ ಮಗ ಗೆದಲ್ಯನನ್ನು ನೆತನ್ಯನ ಮಗ ಇಷ್ಮಾಯೇಲನು ಕೊಂದುಹಾಕಿದ್ದರಿಂದ ಬಾಬಿಲೋನಿಯರಿಗೆ ಆ ಜನರು ಅಂಜಿದ್ದರು.</verse>
			</chapter>
			<chapter number="42">
				<verse number="1">ಇದಾದ ಬಳಿಕ ಎಲ್ಲ ಸೇನಾಪತಿಗಳು, ಕಾರೇಹನ ಮಗ ಯೋಹಾನಾನನು, ರೋಷಾಯನ ಮಗ ಯೆಜನ್ಯನು, ಹಾಗು ಚಿಕ್ಕವರು ಮೊದಲ್ಗೊಂಡು ದೊಡ್ಡವರ ತನಕ ಎಲ್ಲ ಜನರು ಪ್ರವಾದಿ ಯೆರೆಮೀಯನ ಬಳಿಗೆ ಬಂದರು.</verse>
				<verse number="2">“ದಯಮಾಡಿ ನಮ್ಮ ಬಿನ್ನಹವನ್ನು ಆಲಿಸಬೇಕು.</verse>
				<verse number="3">ನಿಮ್ಮ ದೇವರಾದ ಸರ್ವೇಶ್ವರ ಸ್ವಾಮಿ ನಾವು ನಡೆಯಬೇಕಾದ ಮಾರ್ಗವನ್ನೂ ಕೈಗೊಳ್ಳಬೇಕಾದ ಕಾರ್ಯವನ್ನೂ ತೋರಿಸುವಂತೆ ನಮಗಾಗಿ ಪ್ರಾರ್ಥಿಸಬೇಕು. ಅಳಿದುಳಿದಿರುವ ಈ ಎಲ್ಲ ಜನರಿಗಾಗಿ ನಿಮ್ಮ ದೇವರಾದ ಸರ್ವೇಶ್ವರನನ್ನು ನೀವು ಪ್ರಾರ್ಥಿಸಬೇಕು. ನಿಮ್ಮ ಕಣ್ಣಿಗೆ ಕಾಣುವಂತೆ ಹೇರಳವಾದ ಜನರಲ್ಲಿ ನಾವು ಕೆಲವರು ಮಾತ್ರ ಉಳಿದಿದ್ದೇವೆ,” ಎಂದು ವಿಜ್ಞಾಪಿಸಿದರು.</verse>
				<verse number="4">ಇದನ್ನು ಕೇಳಿ ಪ್ರವಾದಿ ಯೆರೆಮೀಯನು ಅವರಿಗೆ, “ನಿಮ್ಮ ಬಿನ್ನಹವನ್ನು ಕೇಳಿದ್ದೇನೆ. ಇಗೋ, ನಿಮ್ಮ ಕೋರಿಕೆಯ ಪ್ರಕಾರ ನಿಮ್ಮ ದೇವರಾದ ಸರ್ವೇಶ್ವರನನ್ನು ಪ್ರಾರ್ಥಿಸುವೆನು. ಸರ್ವೇಶ್ವರ ಯಾವ ಉತ್ತರವನ್ನು ದಯಪಾಲಿಸುವರೋ ಅದರಲ್ಲಿ ಒಂದನ್ನೂ ಮುಚ್ಚುಮರೆಮಾಡದೆ ನಿಮಗೆ ತಿಳಿಸುವೆನು.” ಎಂದು ಹೇಳಿದನು.</verse>
				<verse number="5">ಅದಕ್ಕೆ ಅವರು ಯೆರೆಮೀಯನಿಗೆ, “ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಮೂಲಕ ನಮಗೆ ಕಳಿಸುವ ಮಾತಿನಂತೆ ನಾವು ನಡೆಯದಿದ್ದರೆ, ಆ ಸರ್ವೇಶ್ವರನೇ ಸ್ಥಿರವಾದ ಸತ್ಯಸಾಕ್ಷಿಯಾಗಿ ನಿಂತು, ನಮ್ಮನ್ನು ಖಂಡಿಸಲಿ.</verse>
				<verse number="6">ನಮ್ಮ ದೇವರಾದ ಸರ್ವೇಶ್ವರನ ಮಾತು ಹಿತವಾಗಿರಲಿ, ಅಹಿತವಾಗಿರಲಿ ಅದನ್ನು ಕೈಗೊಳ್ಳುತ್ತೇವೆ. ಅವರ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ನಾವು ಕಳುಹಿಸಿದ್ದೇವೆ. ನಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳಿದರೆ ನಮಗೇ ಶುಭವಾಗುವುದು,” ಎಂದು ಹೇಳಿದರು.</verse>
				<verse number="7">ಹತ್ತು ದಿನಗಳಾದ ಮೇಲೆ ಸರ್ವೇಶ್ವರನ ವಾಣಿ ಯೆರೆಮೀಯನಿಗೆ ಕೇಳಿಬಂದಿತು.</verse>
				<verse number="8">ಆಗ ಆತ ಕಾರೇಹನ ಮಗನಾದ ಯೋಹಾನಾನನ್ನು, ಅವನೊಂದಿಗಿದ್ದ ಸೇನಾಪತಿಗಳೆಲ್ಲರನ್ನು ಹಾಗು ಚಿಕ್ಕವರು ಮೊದಲ್ಗೊಂಡು ದೊಡ್ಡವರ ತನಕ ಎಲ್ಲ ಜನರನ್ನು ಕರೆದನು.</verse>
				<verse number="9">“ನಿಮ್ಮ ವಿಜ್ಞಾಪನೆಯನ್ನು ಸರ್ವೇಶ್ವರನಿಗೆ ಅರಿಕೆ ಮಾಡುವುದಕ್ಕಾಗಿ ನನ್ನನ್ನು ನೀವು ಕಳುಹಿಸಿದ್ದಿರಲ್ಲವೆ? ಅದಕ್ಕೆ ಇಸ್ರಯೇಲಿನ ದೇವರಾದ ಸರ್ವೇಶ್ವರ ಹೀಗೆನ್ನುತ್ತಾರೆ:</verse>
				<verse number="10">‘ನೀವು ಈ ನಾಡಿನಲ್ಲಿ ನೆಲೆಗೊಂಡಿದ್ದರೆ ನಾನು ನಿಮ್ಮನ್ನು ಕಟ್ಟುವೆನು, ಕೆಡುವುದಿಲ್ಲ, ನೆಡುವೆನು, ಕೀಳುವುದಿಲ್ಲ, ನಾನು ನಿಮಗೆ ಮಾಡಿದ ಕೇಡಿಗಾಗಿ ವಿಷಾದಿಸುತ್ತೇನೆ.</verse>
				<verse number="11">ಬಾಬಿಲೋನಿಯದ ಅರಸನಿಗೆ ಹೆದರಬೇಡಿ, ಬೆದರಬೇಡಿ. ನಿಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಲಿಕ್ಕೆ ನಾನೇ ನಿಮ್ಮೊಂದಿಗೆ ಇರುವೆನು. ಇದು ಸರ್ವೇಶ್ವರನಾದ ನನ್ನ ನುಡಿ.</verse>
				<verse number="12">ನಾನು ನಿಮಗೆ ಕರುಣೆತೋರಿಸುವೆನು. ಅವನು ನಿಮ್ಮ ಮೇಲೆ ಮನಮರುಗಿ ಸ್ವಂತ ನಾಡಿಗೆ ಹೋಗಲುಬಿಡುವಂತೆ ಮಾಡುವೆನು.</verse>
				<verse number="13">“ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ಕಿವಿಗೊಡದೆ ‘ನಾವು ಈ ನಾಡಿನಲ್ಲಿ ನೆಲೆಸುವುದೇ ಇಲ್ಲ, ಇದು ನಮಗೆ ಬೇಡವೇಬೇಡ.</verse>
				<verse number="14">ನಾವು ಈಜಿಪ್ಟಿನಲ್ಲೇ ವಾಸಮಾಡುತ್ತೇವೆ. ಅದು ಯುದ್ಧ ಕಾಣದ, ರಣಕಹಳೆ ಕೇಳದ, ಕೂಳಿನ ಕೊರತೆಯಿಲ್ಲದ ದೇಶ.’ ಎಂದುಕೊಳ್ಳಬೇಡಿ.</verse>
				<verse number="15">ಯೆಹೂದ್ಯರಲ್ಲಿ ಅಳಿದು ಉಳಿದವರೇ, ಸರ್ವೇಶ್ವರನ ವಾಕ್ಯವನ್ನು ಈಗ ಕೇಳಿ: ಇಸ್ರಯೇಲಿನ ದೇವರೂ ಸರ್ವೇಶ್ವರರೂ ಆದ ಸರ್ವೇಶ್ವರ ಹೇಳುವುದು ಇದು - ‘ನೀವು ಈಜಿಪ್ಟಿಗೆ ಹೋಗಬೇಕೆಂದು ಹಟಹಿಡಿದು ಅಲ್ಲಿಗೆ ಸೇರಿ ವಾಸಮಾಡುವುದಾದರೆ,</verse>
				<verse number="16">ನೀವು ಹೆದರುತ್ತಿರುವ ಖಡ್ಗ, ಈಜಿಪ್ಟಿನಲ್ಲೂ ನಿಮ್ಮನ್ನು ಹಿಂದಟ್ಟಿ ಬಂದು ಹಿಡಿಯುವುದು. ನೀವು ಅಂಜುತ್ತಿರುವ ಕ್ಷಾಮ ಅಲ್ಲಿಯೂ ನಿಮ್ಮ ಬೆನ್ನು ಹತ್ತುವುದು. ನೀವು ಅಲ್ಲೇ ಸಾಯುವಿರಿ.</verse>
				<verse number="17">ಈಜಿಪ್ಟಿಗೆ ಹೋಗಿ ಅಲ್ಲೆ ವಾಸಿಸಲು ಹಟಹಿಡಿಯುವ ಎಲ್ಲ ಜನರಿಗೂ ಇದೇ ಗತಿಯಾಗುವುದು. ಖಡ್ಗ-ಕ್ಷಾಮ-ವ್ಯಾಧಿಯಿಂದ ಅವರು ಸಾಯುವರು. ನಾನು ಬರಮಾಡುವ ವಿಪತ್ತಿನಿಂದ ಅವರಾರೂ ತಪ್ಪಿಸಿಕೊಳ್ಳರು, ಯಾರೂ ಉಳಿಯರು’.”</verse>
				<verse number="18">“ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಜೆರುಸಲೇಮಿನ ಮೇಲೆ ಹೇಗೆ ಸುರಿಯಿತೋ ಹಾಗೆಯೆ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೆ ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ನಾಡನ್ನು ನೀವು ಮತ್ತೆ ನೋಡಲಾರಿರಿ.’</verse>
				<verse number="19">“ಯೆಹೂದ್ಯರಲ್ಲಿ ಅಳಿದುಳಿದವರೇ, ಸರ್ವೇಶ್ವರ ನಿಮಗೆ ‘ಈಜಿಪ್ಟಿಗೆ ಹೋಗಬೇಡಿ’ ಎಂದು ಆಜ್ಞೆಮಾಡಿದ್ದಾರೆ. ನಾನು ಆ ಮಾತನ್ನು ಇಂದೇ ನಿಮಗೆ ಪ್ರಕಟಿಸಿದ್ದೇನೆ. ಇದು ನಿಮಗೆ ಚೆನ್ನಾಗಿ ತಿಳಿದಿರಲಿ.</verse>
				<verse number="20">ನಿಮ್ಮನ್ನು ನೀವೇ ಮೋಸಮಾಡಿಕೊಳ್ಳುತ್ತಿದ್ದೀರಿ. ನೀವೇ ನನ್ನ ಬಳಿಗೆ ಬಂದು ‘ನಮ್ಮ ದೇವರಾದ ಸರ್ವೇಶ್ವರನನ್ನು ನಮಗಾಗಿ ಪ್ರಾರ್ಥಿಸು. ನಮ್ಮ ದೇವರಾದ ಸರ್ವೇಶ್ವರ ಯಾವ ಅಪ್ಪಣೆ ಕೊಡುತ್ತಾರೋ ಅದನ್ನು ನಮಗೆ ತಿಳಿಸು. ಅದರಂತೆ ನಾವು ನಡೆಯುತ್ತೇವೆ,’ ಎಂಬುದಾಗಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನನ್ನನ್ನು ನೀವೇ ಕಳುಹಿಸಿದಿರಿ.</verse>
				<verse number="21">ನಾನು ಸರ್ವೇಶ್ವರನ ಅಪ್ಪಣೆಯನ್ನು ಈ ದಿನ ನಿಮಗೆ ತಿಳಿಸಿದ್ದೇನೆ. ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರ ನನ್ನ ಮುಖಾಂತರ ನಿಮಗೆ ಹೇಳಿ ಕಳುಹಿಸಿದ ಯಾವ ಮಾತನ್ನು ಕೇಳುತ್ತಿಲ್ಲ.</verse>
				<verse number="22">ನೀವು ಯಾವ ನಾಡಿನಲ್ಲಿ ವಾಸಮಾಡಲು ಬಯಸಿ ಹೋಗುತ್ತೀರೋ ಆ ನಾಡಿನಲ್ಲಿ ಖಡ್ಗ-ಕ್ಷಾಮ-ವ್ಯಾಧಿಗಳಿಂದ ಸಾಯುವಿರಿ. ಇದು ನಿಶ್ಚಯ ಎಂದು ತಿಳಿಯಿರಿ,” ಎಂದನು.</verse>
			</chapter>
			<chapter number="43">
				<verse number="1">ಯೆರೆಮೀಯನು ಜನರೆಲ್ಲರನ್ನು ಸಂಬೋಧಿಸಿ ದೇವರಾದ ಸರ್ವೇಶ್ವರ ತನ್ನ ಮುಖಾಂತರ ಅವರಿಗೆ ಹೇಳಿಕಳುಹಿಸಿದ ಮಾತುಗಳನ್ನೆಲ್ಲ ತಿಳಿಸಿದನು.</verse>
				<verse number="2">ಅದಾದ ಮೇಲೆ ಹೋಷಾಯನ ಮಗ ಅಜರ್ಯನು, ಕಾರೇಹನ ಮಗ ಯೋಹಾನಾನನು, ಹಾಗು ಅಹಂಕಾರಿಗಳಾದ ಜನರೆಲ್ಲರು ಅವನಿಗೆ, “ನಿನ್ನ ಮಾತು ಸುಳ್ಳು, ಈಜಿಪ್ಟಿಗೆ ಹೋಗಿ ವಾಸಮಾಡಬಾರದು ಎಂದು ತಿಳಿಸುವಂತೆ ನಮ್ಮ ದೇವರಾದ ಸರ್ವೇಶ್ವರ ನಿನ್ನನ್ನು ಕಳಿಸಲಿಲ್ಲ.</verse>
				<verse number="3">ಬದಲಿಗೆ ಬಾಬಿಲೋನಿಯರು ನಮ್ಮನ್ನು ಕೊಲ್ಲಲಿ ಅಥವಾ ಸೆರೆಗೊಯ್ಯಲಿ ಎಂದು ನಮ್ಮನ್ನು ಅವರ ಕೈಗೆ ಸಿಕ್ಕಿಸುವುದಕ್ಕಾಗಿ ನೇರೀಯನ ಮಗ ಬಾರೂಕನೇ ನಿನ್ನನ್ನು ನಮ್ಮ ಮೇಲೆ ದೊಬ್ಬಿದ್ದಾನೆ,” ಎಂದರು.</verse>
				<verse number="4">ಹೀಗೆ ಜುದೇಯ ನಾಡಿನಲ್ಲೇ ವಾಸಮಾಡಿರೆಂಬ ಸರ್ವೇಶ್ವರನ ಮಾತನ್ನು ಕಾರೇಹನ ಮಗ ಯೋಹಾನಾನನು, ಸಮಸ್ತ ಸೇನಾಪತಿಗಳು, ಹಾಗು ಸಕಲ ಜನರು ಕೇಳದೆಹೋದರು.</verse>
				<verse number="5">ಆಗ ರಕ್ಷಾದಳದ ನಾಯಕನಾದ ನೆಬೂಜರದಾನನನ್ನು, ಅಹೀಕಾಮನ ಮಗ ಹಾಗು ಶಾಫಾನನ ಮೊಮ್ಮಗ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ್ದ ಜನರನ್ನು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಜುದೇಯದಲ್ಲಿ ವಾಸಿಸುವುದಕ್ಕೆ ಹಿಂದಿರುಗಿ ಬಂದಿದ್ದ ಅಳಿದುಳಿದ ಯೆಹೂದಜನರನ್ನು, ಪ್ರವಾದಿ ಯೆರೆಮೀಯನನ್ನು,</verse>
				<verse number="6">ನೇರೀಯನ ಮಗ ಬಾರೂಕನನ್ನು, ರಾಜಕುವರಿಯರನ್ನು, ಅಂತು ಗಂಡಸರು, ಹೆಂಗಸರು, ಮಕ್ಕಳು,</verse>
				<verse number="7">ಇವರೆಲ್ಲರನ್ನು ಕಾರೇಹನ ಮಗ ಯೋಹಾನಾನನೂ ಸಕಲ ಸೇನಾಪತಿಗಳೂ ಕರೆದುಕೊಂಡು ಈಜಿಪ್ಟಿಗೆ ಹೋಗಿ ತಹಪನೇಸ್ ಎಂಬ ಊರಿಗೆ ಸೇರಿಸಿದರು. ಸರ್ವೇಶ್ವರನ ಮಾತನ್ನು ಅವರು ಕೇಳಲೇ ಇಲ್ಲ.</verse>
				<verse number="8">ಯೆರೆಮೀಯನು ತಹಪನೇಸಿನಲ್ಲಿರುವಾಗ ಸರ್ವೇಶ್ವರನ ಈ ವಾಣಿ ಕೇಳಿ ಬಂದಿತು:</verse>
				<verse number="9">“ನೀನು ದೊಡ್ಡ ಕಲ್ಲುಗಳನ್ನು ಎತ್ತಿಕೊಂಡು ಹೋಗಿ ತಹಪನೇಸಿನಲ್ಲಿರುವ ಫರೋಹನ ಮನೆಯ ಮುಂದೆ, ಯೆಹೂದ್ಯರ ಕಣ್ಣೆದುರಿಗೆ, ನೆಲಗಟ್ಟಿನ ಕೆಳಗೆ ಇಟ್ಟು, ಗಾರೆಯಿಂದ ಮುಚ್ಚಿಬಿಟ್ಟು, ಆ ಜನರಿಗೆ ಹೀಗೆಂದು ಹೇಳು:</verse>
				<verse number="10">‘ಇಸ್ರಯೇಲರ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೇಳುವುದನ್ನು ಕೇಳಿ: ನಾನು ಬಾಬಿಲೋನಿನ ಅರಸನು ಹಾಗು ನನ್ನ ಸೇವಕನು ಆದ ನೆಬೂಕದ್ನೆಚ್ಚರನನ್ನು ನಾನು ಕರೆಯಿಸುವೆನು. ನಾನು ಮರೆಮಾಡಿಟ್ಟಿರುವ ಈ ಕಲ್ಲುಗಳ ಮೇಲೆಯೆ ಅವನು ತನ್ನ ಸಿಂಹಾಸನವನ್ನು ಹಾಕಿಸುವನು. ಈ ಕಲ್ಲುಗಳ ಮೇಲೆಯೆ ತನ್ನ ರತ್ನಗಂಬಳಿಯನ್ನು ಹಾಸಿಸುವನು.</verse>
				<verse number="11">ಅವನು ಬಂದು ಈಜಿಪ್ಟ್ ದೇಶದ ಮೇಲೆ ಧಾಳಿಮಾಡುವನು. ಮರಣಕ್ಕೆ ಗೊತ್ತಾದವರು ಮರಣಕ್ಕೆ, ಸೆರೆಮನೆಗೆ ಗೊತ್ತಾದವರು ಸೆರೆಮನೆಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಗುರಿಯಾಗುವರು.</verse>
				<verse number="12">ಅವನು ಈಜಿಪ್ಟಿನ ದೇವತೆಗಳ ಆಲಯಗಳಿಗೆ ಬೆಂಕಿ ಹೊತ್ತಿಸುವನು. ಅವುಗಳನ್ನು ಸುಟ್ಟು ಆ ದೇವತೆಗಳನ್ನು ಸೆರೆಗೊಯ್ಯುವನು. ಕುರುಬನು ತನ್ನ ಕಂಬಳಿಯನ್ನು ಸೋಸುವಂತೆ ಅವನು ಈಜಿಪ್ಟನ್ನು ಸೋಸುವನು.</verse>
				<verse number="13">ಬಳಿಕ ಹಾಯಾಗಿ ಅಲ್ಲಿಂದ ಹೊರಟುಹೋಗುವನು. ಅವನು ಈಜಿಪ್ಟ್ ದೇಶದಲ್ಲಿರುವ ಸೂರ್ಯ ದೇವಾಲಯದ ಸ್ತಂಭಗಳನ್ನು ಒಡೆದುಹಾಕುವನು, ಅಲ್ಲಿನ ದೇವತೆಗಳ ಆಲಯಗಳನ್ನು ಸುಟ್ಟುಹಾಕುವನು.”</verse>
			</chapter>
			<chapter number="44">
				<verse number="1">ಈಜಿಪ್ಟ್ ದೇಶದ ಮಿಗ್ದೋಲ್, ತಹಪನೇಸ್, ನೋಫ್ ಎಂಬ ನಗರಗಳಲ್ಲೂ ಮತ್ತು ಪತ್ರೋಸ್ ಪ್ರಾಂತ್ಯದಲ್ಲೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಸರ್ವೇಶ್ವರ ಸ್ವಾಮಿ ಯೆರೆಮೀಯನಿಗೆ ತಿಳಿಯಪಡಿಸಿದ ವಾಣಿ ಇದು:</verse>
				<verse number="2">“ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ: ‘ನಾನು ಜೆರುಸಲೇಮಿಗು ಹಾಗುಜುದೇಯದ ಎಲ್ಲ ಊರುಗಳಿಗು ಬರಮಾಡಿದ ಕೇಡನ್ನು ನೀವೇ ನೋಡಿದ್ದೀರಿ.</verse>
				<verse number="3">ಅಲ್ಲಿನವರು ತಮಗೂ ನಿಮಗೂ ಮತ್ತು ನಿಮ್ಮ ಪೂರ್ವಜರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿ ಪೂಜಿಸುವುದಕ್ಕೆ ತವಕಪಟ್ಟರು. ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದರು. ಆದ್ದರಿಂದಲೇ ಆ ಸ್ಥಳಗಳು ಹಾಳಾದವು, ನಿರ್ಜನಪ್ರದೇಶಗಳಾದವು.</verse>
				<verse number="4">ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡಮಾಡದೆ ಕಳುಹಿಸುತ್ತಾಬಂದೆ. ‘ಎಚ್ಚರಿಕೆ, ನಾನು ಹೇಸುವ ಈ ಅಸಹ್ಯಕಾರ್ಯಗಳನ್ನು ಮಾಡಬೇಡಿ’ ಎಂದು ಪ್ರಕಟಿಸುತ್ತಾ ಬಂದೆ.</verse>
				<verse number="5">ಆದರೂ ಅವರು ಕಿವಿಗೊಟ್ಟು ಕೇಳಲಿಲ್ಲ. ಅನ್ಯದೇವತೆಗಳಿಗೆ ಧೂಪಾರತಿ ಎತ್ತುವುದನ್ನು ನಿಲ್ಲಿಸಲಿಲ್ಲ. ತಮ್ಮ ದುರಾಚಾರವನ್ನು ಕೈಬಿಡಲಿಲ್ಲ.</verse>
				<verse number="6">ಆದಕಾರಣ, ನನ್ನ ರೌದ್ರಕೋಪಾಗ್ನಿ ಸುರಿದು ಜುದೇಯದ ಊರುಗಳಲ್ಲೂ ಜೆರುಸಲೇಮಿನ ಬೀದಿಗಳಲ್ಲೂ ಧಗಧಗಿಸಿತು. ಅವು ಈಗಲೂ ಹಾಳುಪಾಳಾಗಿವೆ.’</verse>
				<verse number="7">“ಹೀಗಿರಲು, ಸೇನಾಧೀಶ್ವರ ಸ್ವಾಮಿಯೂ ಇಸ್ರಯೇಲಿನ ದೇವರೂ ಆದ ಸರ್ವೇಶ್ವರ ಈಗ ಹೇಳುವುದನ್ನು ಕೇಳಿ: ‘ಈ ದೊಡ್ಡ ಕೇಡನ್ನು ನಿಮಗೆ ನೀವೆ ಬರಮಾಡಿಕೊಳ್ಳುವುದು ಸರಿಯೆ? ಈ ದುರಾಚಾರದ ನಿಮಿತ್ತ ಜುದೇಯದ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು. ನಿಮ್ಮಲ್ಲಿ ಯಾರೂ ಉಳಿಯರು.</verse>
				<verse number="8">ಪ್ರವಾಸಿಗಳಾಗಿ ನೀವು ಬಂದಿರುವ ಈಜಿಪ್ಟಿನಲ್ಲಿ ಅನ್ಯದೇವತೆಗಳಿಗೆ ಧೂಪಾರತಿ ಎತ್ತುವ ದುಷ್ಕೃತ್ಯವನ್ನು ನಡೆಸುತ್ತಾ ನನ್ನನ್ನು ಕೆಣಕುತ್ತಿದ್ದೀರಿ. ಆದ್ದರಿಂದ ನೀವೂ ನಿರ್ಮೂಲರಾಗಿ ಎಲ್ಲ ಭೂರಾಜ್ಯಗಳ ಶಾಪ, ನಿಂದೆ, ದೂಷಣೆಗಳಿಗೆ ಗುರಿಯಾಗುವಿರಿ.</verse>
				<verse number="9">ನಿಮ್ಮ ಪೂರ್ವಜರು, ಜುದೇಯದ ಅರಸರು, ಅವರ ಪತ್ನಿಯರು, ನೀವು, ನಿಮ್ಮ ಹೆಂಡತಿಯರು, ಇವರೆಲ್ಲರು ಜುದೇಯದ ನಾಡಿನಲ್ಲೂ ಜೆರುಸಲೇಮಿನ ಹಾದಿಬೀದಿಗಳಲ್ಲೂ ನಡೆಸಿದ ದುರಾಚಾರಗಳನ್ನು ನೀವು ಮರೆತುಬಿಟ್ಟಿರೋ?</verse>
				<verse number="10">ಅವರು ಇಂದಿನವರೆಗೂ ಪಶ್ಚಾತ್ತಾಪಪಡಲಿಲ್ಲ. ನನಗೆ ಭಯಪಡಲಿಲ್ಲ. ನಿಮಗೂ ನಿಮ್ಮ ಪೂರ್ವಜರಿಗೂ ನಾನು ನೇಮಿಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲಿಲ್ಲ.”</verse>
				<verse number="11">“ಆದಕಾರಣ ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೇಳುವುದನ್ನು ಕೇಳಿರಿ: ‘ಜುದೇಯವನ್ನೆಲ್ಲ ನಿರ್ಮೂಲ ಮಾಡುವೆನು. ಕೇಡಿಗಾಗಿಯೇ ನಿಮ್ಮ ಮೇಲೆ ಕಣ್ಣಿಡುವೆನು.</verse>
				<verse number="12">ಈಜಿಪ್ಟಿಗೆ ಹೋಗಿ ಅಲ್ಲಿ ಪ್ರವಾಸಿಸಲು ಹಟಹಿಡಿದ ಆ ಜುದೇಯದ ಅಳಿದುಳಿದ ಜನರನ್ನು ನಾಶಮಾಡುವೆನು. ಈಜಿಪ್ಟಿನಲ್ಲೆ ಅವರು ಮಣ್ಣುಪಾಲಾಗುವರು. ಖಡ್ಗ-ಕ್ಷಾಮಗಳಿಂದ ಅಳಿದುಹೋಗುವರು. ಚಿಕ್ಕವರು-ದೊಡ್ಡವರು ಎನ್ನದೆ ಖಡ್ಗ-ಕ್ಷಾಮಗಳಿಗೆ ತುತ್ತಾಗಿ, ಅಪವಾದ, ಅಪಹಾಸ್ಯಗಳಿಗೂ ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವರು.</verse>
				<verse number="13">ಜೆರುಸಲೇಮಿನವರನ್ನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ದಂಡಿಸಿದಂತೆ ಈಜಿಪ್ಟಿನಲ್ಲಿ ವಾಸಿಸುವವರನ್ನೂ ದಂಡಿಸುವೆನು.</verse>
				<verse number="14">ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಆ ಜುದೇಯದ ಅಳಿದುಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಅಲ್ಲಿಂದ ತಪ್ಪಿಸಿಕೊಂಡು ಜುದೇಯಕ್ಕೆ ಹಿಂದಿರುಗಿದರು. ಕೆಲವು ನಿರಾಶ್ರಿತರನ್ನು ಬಿಟ್ಟರೆ ಯಾವನೂ ಹಿಂತಿರುಗುವುದಿಲ್ಲ’.”</verse>
				<verse number="15">ಆಗ ತಮ್ಮ ಹೆಂಡತಿಯರು ಅನ್ಯದೇವತೆಗಳಿಗೆ ಧೂಪಾರತಿ ಎತ್ತುತ್ತಿದ್ದರೆಂದು ತಿಳಿದುಕೊಂಡ ಗಂಡಸರು, ಅಲ್ಲೆ ದೊಡ್ಡ ಗುಂಪಾಗಿ ನಿಂತಿದ್ದ ಹೆಂಗಸರು, ಹಾಗೂ ಈಜಿಪ್ಟಿನಲ್ಲೂ ಪತ್ರೋಸಿನಲ್ಲೂ ವಾಸವಾಗಿದ್ದ ಎಲ್ಲ ಜನರು ಯೆರೆಮೀಯನಿಗೆ ಹೀಗೆಂದು ಉತ್ತರಕೊಟ್ಟರು:</verse>
				<verse number="16">“ಸರ್ವೇಶ್ವರನ ಹೆಸರಿನಲ್ಲಿ ನೀನು ನಮಗೆ ನುಡಿದ ಮಾತನ್ನು ನಾವು ಕೇಳಲೊಲ್ಲೆವು.</verse>
				<verse number="17">ನಾವು, ನಮ್ಮ ಪೂರ್ವಜರು, ನಮ್ಮ ಅರಸರು, ಅಧಿಕಾರಿಗಳು ಜುದೇಯದ ಊರುಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದಂತೆ ಗಗನದೊಡತಿಯಾದ ದೇವತೆಗೆ ಧೂಪಾರತಿ ಎತ್ತುತ್ತೇವೆ. ಪಾನನೈವೇದ್ಯವನ್ನು ಸುರಿಯುತ್ತೇವೆ. ನಾವು ಬಾಯಿಬಿಟ್ಟು ಹೇಳಿದ ಈ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುತ್ತೇವೆ. ಏಕೆಂದರೆ ಹಾಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬ ಉಂಡು ಸುಖಪಡುತ್ತಿದ್ದೆವು.</verse>
				<verse number="18">ಆ ಗಗನದೊಡತಿಗೆ ಧೂಪಾರತಿ ಎತ್ತುವುದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವುದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ತರಹದ ಕೊರತೆಗೆ ಗುರಿಯಾಗುತ್ತಿದ್ದೇವೆ, ಖಡ್ಗ-ಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.”</verse>
				<verse number="19">ಮಹಿಳೆಯರು, “ಗಗನದೊಡತಿಗೆ ಧೂಪಾರತಿ ಎತ್ತಿ, ಪಾನನೈವೇದ್ಯವನ್ನು ಸುರಿಯುತ್ತಿದ್ದಾಗ ನಾವು ಆಕೆಯ ಪೂಜೆಗಾಗಿ ಆಕೆಯ ಆಕಾರದಂಥ ಹೋಳಿಗೆಗಳನ್ನು ಮಾಡಿ ಪಾನದ್ರವ್ಶವನ್ನು ಅರ್ಪಿಸುತ್ತಿದ್ದುದು ನಮ್ಮ ಗಂಡಂದಿರಿಗೆ ಒಪ್ಪಿಗೆಯಾಗಿರಲಿಲ್ಲವೆ?” ಎಂದರು.</verse>
				<verse number="20">ಆಗ ಯೆರೆಮೀಯನು ಆ ಗಂಡಸರಿಗೆ, ಮಹಿಳೆಯರಿಗೆ ಹಾಗು ತನಗೆ ಉತ್ತರಕೊಟ್ಟ ಎಲ್ಲ ಜನರಿಗೆ ಹೀಗೆಂದು ಹೇಳಿದನು:</verse>
				<verse number="21">ನೀವು, ನಿಮ್ಮ ಪೂರ್ವಜರು, ನಿಮ್ಮ ಅರಸರು, ಅಧಿಕಾರಿಗಳು, ಜನಸಾಮಾನ್ಯರು ಮತ್ತು ನೀವೆಲ್ಲರು ಜುದೇಯದ ಊರುಗಳಲ್ಲೂ ಜೆರುಸಲೇಮಿನ ಬೀದಿಗಳಲ್ಲೂ ಎತ್ತಿದ ಧೂಪಾರತಿ ಸರ್ವೇಶ್ವರನ ನೆನಪಿನಲ್ಲಿ ಇದೆ ಅಲ್ಲವೆ? ಅದನ್ನು ಅವರು ಮರೆತುಬಿಟ್ಟಿದ್ದಾರೆಯೇ?</verse>
				<verse number="22">ನೀವು ನಡೆಸಿದ ದುರಾಚಾರಗಳನ್ನು ಹಾಗು ಅಸಹ್ಯಕಾರ್ಯಗಳನ್ನು ಸರ್ವೇಶ್ವರ ಇನ್ನು ಸಹಿಸಲಾರದೆ ಹೋದುದರಿಂದಲೇ ನಿಮ್ಮ ನಾಡು ಹಾಳುಬಿದ್ದಿದೆ. ನಿರ್ಜನವಾಗಿ ಭಯಭೀತಿಗೆ ಎಡೆ ಆಗಿದೆ. ಅದರ ಸ್ಥಿತಿ ಈಗಲೂ ಬದಲಾಗಿಲ್ಲ.</verse>
				<verse number="23">ನೀವು ಸರ್ವೇಶ್ವರ ಸ್ವಾಮಿಯ ಮಾತನ್ನು ಕೇಳದೆ, ಅವರ ಧರ್ಮಶಾಸ್ತ್ರವನ್ನೂ ನಿಬಂಧನೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸದೆ, ಪಾಪಮಾಡಿ ಅನ್ಯದೇವತೆಗಳಿಗೆ ಧೂಪಾರತಿ ಎತ್ತಿದ್ದರಿಂದಲೇ ಇಂಥಾ ವಿಪತ್ತು ನಿಮಗೆ ಸಂಭವಿಸಿದೆ.”</verse>
				<verse number="24">ಇದಲ್ಲದೆ ಯೆರೆಮೀಯನು ಆ ಎಲ್ಲ ಜನರಿಗೆ ಮುಖ್ಯವಾಗಿ ಮಹಿಳೆಯರಿಗೆ, ಹೀಗೆ ಹೇಳಿದನು: “ಈಜಿಪ್ಟಿನಲ್ಲಿರುವ ಯೆಹೂದ್ಯರೇ, ನಿಮ್ಮೆಲ್ಲರಿಗೆ ಸರ್ವೇಶ್ವರ ಹೀಗೆನ್ನುತ್ತಾರೆ - ‘ಗಗನದೊಡತಿಗೆ ಧೂಪಾರತಿ ಎತ್ತಿ ಪಾನನೈವೇದ್ಯವನ್ನು ಸುರಿಯುತ್ತೇವೆ. ಅದಕ್ಕಾಗಿ ಮಾಡಿಕೊಂಡ ಹರಕೆಯನ್ನು ಖಂಡಿತವಾಗಿ ತೀರಿಸುತ್ತೇವೆ ಎಂಬುದಾಗಿ ನೀವೂ ನಿಮ್ಮ ಹೆಂಡತಿಯರೂ ಬಾಯಿಂದ ಪ್ರತಿಜ್ಞೆಮಾಡಿದ್ದೀರಿ, ಕೈಯಿಂದ ನೆರವೇರಿಸಿದ್ದೀರಿ! ಸರಿಸರಿ, ನಿಮ್ಮ ಹರಕೆಗಳನ್ನು ತೀರಿಸಿರಿ, ಅವುಗಳನ್ನು ಬಿಡದೆ ನೆರವೇರಿಸಿರಿ!</verse>
				<verse number="25"></verse>
				<verse number="26">ಈಜಿಪ್ಟಿನಲ್ಲಿ ವಾಸವಾಗಿರುವ ಯೆಹೂದ್ಯರೇ, ನೀವೆಲ್ಲರು ಸರ್ವೇಶ್ವರನಾದ ನಾನು ಹೇಳುವ ಮಾತನ್ನು ಕೇಳಿರಿ: ‘ಸರ್ವೇಶ್ವರನಾದ ದೇವರ ಜೀವದಾಣೆ’ ಎಂದು ನನ್ನ ಹೆಸರನ್ನು ಬಾಯಿಂದ ಉಚ್ಚರಿಸಲಿಕ್ಕೆ ಈಜಿಪ್ಟಿನಲ್ಲಿ ಯಾವ ಯೆಹೂದ್ಯನು ಇನ್ನಿರನು ಎಂಬುದಾಗಿ ನನ್ನ ಮಹಾನಾಮದ ಮೇಲೆ ಆಣೆ ಇಟ್ಟಿದ್ದೇನೆ.</verse>
				<verse number="27">ಇಗೋ, ನಿಮಗೆ ಒಳಿತನ್ನು ಅಲ್ಲ, ಕೇಡನ್ನು ಬರಮಾಡಬೇಕೆಂದು ನಿಮ್ಮ ವಿಷಯದಲ್ಲಿ ಎಚ್ಚರಗೊಂಡಿದ್ದೇನೆ. ಈಜಿಪ್ಟಿನ ಎಲ್ಲ ಯೆಹೂದ್ಯರು ಖಡ್ಗ-ಕ್ಷಾಮಗಳಿಂದ ನಾಶಹೊಂದುತ್ತಾ ನಿರ್ನಾಮವಾಗುವರು.</verse>
				<verse number="28">ಖಡ್ಗಕ್ಕೆ ತಪ್ಪಿಸಿಕೊಂಡ ಕೊಂಚ ಜನರು ಮಾತ್ರ ಈಜಿಪ್ಟಿನಿಂದ ಜುದೇಯಕ್ಕೆ ಹಿಂದಿರುಗುವರು. ಈಜಿಪ್ಟಿಗೆ ಹೋಗಿ ಪ್ರವಾಸಿಸುತ್ತಿರುವ ಅಳಿದು ಉಳಿದ ಯೆಹೂದ್ಯರೆಲ್ಲರು, ನನ್ನ ಮಾತು ದಿಟವಾಯಿತೋ ಅಥವಾ ಅವರ ಮಾತು ದಿಟವಾಯಿತೋ ಎಂದು ಆಗ ತಿಳಿದುಕೊಳ್ಳುವರು.’</verse>
				<verse number="29">‘ನಾನು ನಿಮ್ಮನ್ನು ಈ ಸ್ಥಳದಲ್ಲೇ ದಂಡಿಸುವೆನು ಎಂಬುದಕ್ಕೆ ಒಂದು ಗುರುತು ಕಾಣುವುದು. ನನ್ನ ಮಾತು ಈಡೇರಿ ನಿಮಗೆ ಕೇಡು ಉಂಟಾಗುವುದು ಎಂಬುದಾಗಿ ಅದರಿಂದಲೇ ನಿಮಗೆ ತಿಳಿದುಬರುವುದು;</verse>
				<verse number="30">ಆ ಗುರುತು ಯಾವುದೆಂದರೆ: ಇಗೋ ಜುದೇಯದ ಅರಸ ಚಿದ್ಕೀಯನನ್ನು ಅವನ ಪ್ರಾಣ ಶತ್ರುವಾದ ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನ ಕೈ಼ಗೆ ಒಪ್ಪಿಸಿದಂತೆ ಈಜಿಪ್ಟಿನ ಅರಸನಾದ ಫರೋಹ ಹೊಫ್ರನನ್ನು ಅವನ ಪ್ರಾಣ ಹುಡುಕುವ ಶತ್ರುಗಳ ಕೈಗೆ ಒಪ್ಪಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ’.”</verse>
			</chapter>
			<chapter number="45">
				<verse number="1">ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದನು. ಆಗ ಪ್ರವಾದಿ ಯೆರೆಮೀಯನು ಸರ್ವೇಶ್ವರನ ಆಜ್ಞೆಯ ಪ್ರಕಾರ ಈ ವಾಕ್ಯವನ್ನು ಬಾರೂಕನಿಗೆ ನುಡಿದನು.</verse>
				<verse number="2">“ಬಾರೂಕನೇ, ಇಸ್ರಯೇಲಿನ ದೇವರಾದ ಸರ್ವೇಶ್ವರ ಸ್ವಾಮಿ ನಿನಗೆ ಹೇಳುವುದನ್ನು ಕೇಳು: ನೀನು, ‘ಅಯ್ಯೋ, ನನಗೆ ಕೇಡು!</verse>
				<verse number="3">ವ್ಯಥೆಪಡುತ್ತಿದ್ದ ನನಗೆ ಸರ್ವೇಶ್ವರ ದುಃಖದ ಮೇಲೆ ದುಃಖ ಕಳುಹಿಸಿದ್ದಾರೆ. ನಾನು ನರಳಿ ದಣಿದು ಹೋಗಿದ್ದೇನೆ. ನನಗೆ ಯಾವ ನೆಮ್ಮದಿಯೂ ದೊರಕದಿದೆ’ ಎಂದು ಹೇಳುತ್ತಿರುವೆ ಅಲ್ಲವೆ?</verse>
				<verse number="4">“ಸರ್ವೇಶ್ವರನ ಈ ವಾಣಿಯನ್ನು ಕೇಳು: ‘ನೋಡು, ನಾನು ಕಟ್ಟಿದ್ದನ್ನು ನಾನೇ ಕೆಡವುತ್ತೇನೆ. ನಾನು ನೆಟ್ಟಿದ್ದನ್ನು ನಾನೇ ಕಿತ್ತುಹಾಕುತ್ತೇನೆ. ಹೌದು ಜಗದಲ್ಲೆಲ್ಲ ಹಾಗೆ ಮಾಡುತ್ತೇನೆ.</verse>
				<verse number="5">ನಿನಗೆ ಮಾತ್ರ ಪ್ರತ್ಯೇಕ ಸ್ಥಾನಮಾನಗಳನ್ನು ನಿರೀಕ್ಷಿಸುತ್ತಿಯೋ? ನಿರೀಕ್ಷಿಸಬೇಡ. ಹೌದು, ಮಾನವ ಜನಾಂಗವನ್ನೇ ನಾನು ದಂಡಿಸಲಿದ್ದೇನೆ. ಆದರೆ ನೀನು ಎಲ್ಲಿಗೆ ಹೋದರೂ ನಿನ್ನ ಪ್ರಾಣವೊಂದನ್ನು ಕೊಳ್ಳೆಯಂತೆ ಉಳಿಸಿಕೊಳ್ಳಲಿಕ್ಕೆ ಅವಕಾಶ ನೀಡುತ್ತೇನೆ. ಇದು ಸರ್ವೇಶ್ವರನಾದ ನನ್ನ ನುಡಿ.”</verse>
			</chapter>
			<chapter number="46">
				<verse number="1">ರಾಷ್ಟ್ರಗಳ ವಿಷಯವಾಗಿ ಸರ್ವೇಶ್ವರ ಸ್ವಾಮಿ ಪ್ರವಾದಿ ಯೆರೆಮೀಯನಿಗೆ ಅನುಗ್ರಹಿಸಿದ ವಾಣಿ ಇದು: ಈಜಿಪ್ಟನ್ನು ಕುರಿತ ವಾಣಿ:</verse>
				<verse number="2">ಯೋಷೀಯನ ಮಗನೂ ಜುದೇಯದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಈಜಿಪ್ಟಿನ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿ ಇರುವಾಗ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಆ ಸೈನ್ಯದ ಮೇಲೆ ದಾಳಿಮಾಡಿದ ವಿಷಯ:</verse>
				<verse number="3">“ಗುರಾಣಿ ಖೇಡ್ಯಗಳನ್ನು ಸಿದ್ಧಮಾಡಿ ಯುದ್ಧಕ್ಕೆ ಹೊರಡಿ!</verse>
				<verse number="4">ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿ. ಭರ್ಜಿಗಳನ್ನು ಬೆಳಗಿರಿ, ಕವಚಗಳನ್ನು ತೊಟ್ಟುಕೊಳ್ಳಿರಿ!”</verse>
				<verse number="5">“ಆದರೆ, ನನ್ನ ಕಣ್ಣಿಗೆ ಕಾಣುತ್ತಿರುವುದೇನು? ಅವರು ಓಡುತ್ತಿರುವರು ನೋಡು, ಧೈರ್ಯಗೆಟ್ಟು, ಬೆನ್ನುಗೊಟ್ಟು. ಅವರ ಶೂರರು ಹಿಂದಿರುಗದೆ ಓಡುತ್ತಿರುವರು ಪೆಟ್ಟುತಿಂದು, ದಿಗಿಲು ಕವಿದಿದೆ ಸುತ್ತ ಮುತ್ತಲು,” ಸರ್ವೇಶ್ವರನ ವಾಣಿ ಇದು.</verse>
				<verse number="6">“ವೇಗಶಾಲಿಗಳು ಓಡಿಹೋಗಲಾರರು ಬಲಿಷ್ಟರು ತಪ್ಪಿಸಿಕೊಳ್ಳಲಾರರು. ಉತ್ತರದಲ್ಲಿ, ಯೂಫ್ರೆಟಿಸ್ ನದಿಯ ಹತ್ತಿರದಲ್ಲಿ, ಎಡವಿಬಿದ್ದಿರುವರು.</verse>
				<verse number="7">ಈ ಪ್ರವಾಹ ಯಾವುದು? ನೈಲ್ ನದಿಯಂತೆ ಉಬ್ಬಿರುವುದಲ್ಲಾ? ನೈಲಿನ ಶಾಖೆಗಳ ಹಾಗೆ ತುಂಬಿ ತುಳುಕುತ್ತಿದೆಯಲ್ಲಾ?</verse>
				<verse number="8">ಈಜಿಪ್ಟ್ ನದಿ ಉಬ್ಬಿದೆ, ನೈಲ್ ನದಿಯಂತೆ ಈಜಿಪ್ಟೆಂಬ ಪ್ರವಾಹವೇ ತುಂಬಿ ತುಳುಕುತ್ತಿದೆ ನೈಲಿನ ಶಾಖೆಗಳಂತೆ, ‘ನಾನು ಉಬ್ಬಿಕೊಂಡು ಲೋಕದೊಳಗೆಲ್ಲಾ ಹಬ್ಬುವೆನು ನಗರಗಳನ್ನೂ ಅವುಗಳ ನಿವಾಸಿಗಳನ್ನೂ ನಾಶಮಾಡುವೆನು’ ಎಂದುಕೊಳ್ಳುತ್ತಿರುವುದು.</verse>
				<verse number="9">ಅಶ್ವಗಳೇ, ಕುಣಿದಾಡಿ; ರಥಗಳೇ, ರಭಸವಾಗಿ ಓಡಿ! ಹೊರಡಲಿ ಶೂರರು, ಖೇಡ್ಯ ಸನ್ನದ್ಧರಾದ ಸುಡಾನರು, ಲಿಬಿಯಾದವರು ಮುನ್ನುಗ್ಗಲಿ ಧನುರ್ಧಾರಿಗಳಾದ ಲಿಡಿಯದವರು.</verse>
				<verse number="10">ಆದರೆ ಈ ದಿನ, ಯುದ್ಧದ ದಿನ ಸೇನಾಧೀಶ್ವರನೆಂಬ ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಮುಯ್ಯಿ ತೀರಿಸುವ ದಿನ ಇದು ದಂಡನೆಯ ದಿನ. ಇಂದು ಖಡ್ಗವು ಕಬಳಿಸುವುದು ತೃಪ್ತಿಯಾಗಿ ರಕ್ತವನ್ನು ಹೀರುವುದು ಸಂತೃಪ್ತಿಯಾಗಿ ಉತ್ತರದ ಯೂಪ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿರುವನು ಸರ್ವಶಕ್ತನೆಂಬ ಸರ್ವೇಶ್ವರ.</verse>
				<verse number="11">ಈಜಿಪ್ಟಿನ ಕನ್ಯೆಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಕೊಂಡು ಬಾ ನಿನ್ನ ಬಗೆಬಗೆಯ ಮದ್ದುಗಳಿಂದ ಪ್ರಯೋಜನವಿಲ್ಲ ಅವುಗಳಿಂದ ನಿನಗೆ ಗುಣವಾಗುವಂತಿಲ್ಲ!</verse>
				<verse number="12">ನಿನ್ನ ಲಜ್ಜೆಯ ಸುದ್ದಿ ರಾಷ್ಟ್ರಗಳಿಗೆ ಮುಟ್ಟಿದೆ ಲೋಕವೆಲ್ಲಾ ನಿನ್ನ ಗೋಳಾಟದಿಂದ ತುಂಬಿದೆ ಯೋಧನು ಯೋಧನನ್ನು ಎಡವಿ, ಇಬ್ಬರೂ ಬಿದ್ದಿರುವರು ಕೆಳಗೆ.”</verse>
				<verse number="13">ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಬಂದು ಈಜಿಪ್ಟ್ ದೇಶದ ಮೇಲೆ ಮುತ್ತಿಗೆ ಹಾಕುವನು ಎಂಬುದಾಗಿ ಸರ್ವೇಶ್ವರನಿಂದ ಪ್ರವಾದಿ ಯೆರೆಮೀಯನಿಗೆ ಕೇಳಿ ಬಂದ ವಾಣಿ:</verse>
				<verse number="14">“ಪ್ರಕಟಿಸಿರಿ ಈಜಿಪ್ಟಿನಲ್ಲಿ, ಪ್ರಚುರಪಡಿಸಿರಿ ಮಿಗ್ದೋಲ್, ತಹಪನೇಸ್, ಹಾಗು ಸೋಫ್ ಎಂಬೀ ನಗರಗಳಲ್ಲಿ. ಸಾರಿರಿ ಇಂತೆಂದು: ‘ಈಜಿಪ್ಟೇ, ಸ್ಥಿರವಾಗಿ ನಿಲ್ಲು, ಯುದ್ಧ ಸನ್ನದ್ಧವಾಗು, ಖಡ್ಗ ಆವರಿಸುತ್ತಿದೆ ನಿನ್ನ ಸುತ್ತಮುತ್ತಲು’</verse>
				<verse number="15">ನಿನ್ನ ಎಪಿಸ್ ಬಸವ ಬಿದ್ದುಹೋದದ್ದೇನು? ಸರ್ವೇಶ್ವರನೆ ಕೆಡವಲು ಅದು ನಿಲ್ಲಲಾರದೆ ಹೋಯಿತು!</verse>
				<verse number="16">ಬಹುಜನರು ಮುಗ್ಗರಿಸಿ ಬಿದ್ದರು ಹೌದು, ಒಬ್ಬರಿಗೊಬ್ಬರು ತಾಕಿ ಬಿದ್ದರು. ‘ಎದ್ದು ಜನ್ಮಭೂಮಿಗೆ ತೆರಳೋಣ ಸ್ವಜನರನ್ನು ಸೇರಿಕೊಳ್ಳೋಣ ಸಂಹರಿಸುವ ಖಡ್ಗದಿಂದ ತಪ್ಪಿಸಿಕೊಳ್ಳೋಣ’ ಎಂದುಕೊಂಡರು.</verse>
				<verse number="17">ಈಜಿಪ್ಟಿನ ಅರಸನು ಗಡಿಬಿಡಿಯ ಮಾತಾಡಿ ಸದಾವಕಾಶವನ್ನು ಕಳೆದುಕೊಂಡವನೆಂದು ಕರೆಸಿಕೊಂಡ ವ್ಯಕ್ತಿ.</verse>
				<verse number="18">ಇಗೋ, ಸೇನಾಧೀಶ್ವರ ಸರ್ವೇಶ ಎಂಬ ಹೆಸರುಳ್ಳ ರಾಜಾಧಿರಾಜನ ನುಡಿ: ‘ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆ ಸಮುದ್ರದಿಂದೆದ್ದಿರುವ ಕರ್ಮೆಲ್ ಗುಡ್ಡದಂತೆ ಉನ್ನತನೊಬ್ಬನು ಬರುವನು, ನನ್ನ ಜೀವದಾಣೆ.’</verse>
				<verse number="19">ಈಜಿಪ್ಟಿನಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೊ. ಮೆಂಫಿಸ್ ನಗರ ಹಾಳಾಗುವುದು ಅದು ಸುಟ್ಟು ನಿರ್ಜನವಾಗುವುದು.</verse>
				<verse number="20">ಈಜಿಪ್ಟ್ ಅಂದವಾದ ಒಂದು ಕಡಸು ಅದಕ್ಕೆ ಹತ್ತಿಬಿಟ್ಟಿದೆ ಬಡಗಲಿಂದ ಬಂದ ಉಣ್ಣೆ.</verse>
				<verse number="21">ಸಂಬಳಕ್ಕಾಗಿ ಈಜಿಪ್ಟ್ ಸೇರಿದ ದಂಡಾಳುಗಳು ನೋಡಲಿಕ್ಕೆ ಅವರು ಕೊಬ್ಬಿದ ಕರುಗಳು. ಆದರೂ ಬೆಂಗೊಟ್ಟು ಓಡಿಹೋಗಿರುವರು ನಿಲ್ಲದೆ, ವಿಪತ್ಕಾಲ, ದಂಡನೆಯ ದಿನ, ಬಂದೊದಗಿದೆ ಅವರಿಗೆ.</verse>
				<verse number="22">ಈಜಿಪ್ಟ್ ದೇಶ ದೌಡಾಯಿಸುವ ಶಬ್ದ ಸರಿಯುವ ಸರ್ಪದ ಸಪ್ಪಳಕ್ಕೆ ಸಮಾನ. ಕೊಡಲಿಗಳಿಂದ ಮರಕಡಿಯುವವರಂತೆ ಶತ್ರುಗಳು ದಂಡೆತ್ತಿ ಬಂದು ಬೀಳುವರು ಆ ನಾಡಿನ ಮೇಲೆ.</verse>
				<verse number="23">ಮಿಡಿತೆಗಳಿಗಿಂತ ಅಸಂಖ್ಯಾತರಾಗುವವರು ಕಡಿವರವರು ದಾಟಲಾಗದ ಈಜಿಪ್ಟಿನ ದಟ್ಟ ಕಾಡನ್ನು ಸರ್ವೇಶ್ವರನ ನುಡಿ ಇದು.</verse>
				<verse number="24">ಈಜಿಪ್ಟೆಂಬ ಯುವತಿ ಗುರಿಯಾಗುವಳು ಅವಮಾನಕ್ಕೆ ಸಿಕ್ಕಿಬೀಳುವಳು ಬಡಗಲವರ ಕೈಗೆ.”</verse>
				<verse number="25">ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ, ನಾನು ನೋ ಎಂಬ ನಗರದಲ್ಲಿನ ಅಮೋನ್ ದೇವತೆಯನ್ನು, ಫರೋಹನನ್ನು, ಈಜಿಪ್ಟನ್ನು, ಈಜಿಪ್ಟಿನ ದೇವತೆಗಳನ್ನೂ ಅಲ್ಲಿನ ಅರಸರನ್ನೂ ದಂಡಿಸುವೆನು. ಹೌದು, ಫರೋಹನನ್ನೂ ಅವನಲ್ಲಿ ನಂಬಿಕೆ ಇಟ್ಟವರನ್ನೂ ದಂಡಿಸುವೆನು.</verse>
				<verse number="26">ಅವರ ಪ್ರಾಣವನ್ನು ಹುಡುಕುವ ಬಾಬಿಲೋನಿಯದ ಅರಸನಾದ ನೆಬೂಕದ್ನೆಚ್ಚರನ ಮತ್ತು ಅವರ ಸೇವಕರ ಕೈಗೆ ಅವರನ್ನು ಒಪ್ಪಿಸಿಬಿಡುವೆನು. ಆ ಬಳಿಕ ಈಜಿಪ್ಟಿನಲ್ಲಿ ಪೂರ್ವಕಾಲದ ಹಾಗೆ ಜನರು ವಾಸಿಸುವರು. ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="27">“ನನ್ನ ದಾಸ ಯಕೋಬೇ, ಭಯಪಡಬೇಡ ಇಸ್ರಯೇಲೇ, ಅಂಜಬೇಡ, ಇಗೋ, ನಾನು ನಿನ್ನನ್ನು ಉದ್ಧರಿಸುವೆನು ದೂರದೇಶದಿಂದ ನಿನ್ನ ಸಂತಾನವನ್ನು ರಕ್ಷಿಸುವೆನು ಸೆರೆಹೋದ ಸೀಮೆಯಿಂದ. ಯಕೋಬು ಹಾಯಾಗಿ ಹಿಂತಿರುಗಿ ಬಾಳುವುದು ನೆಮ್ಮದಿಯಿಂದ. ಭಯಪಡಬೇಡ ನನ್ನ ದಾಸ ಯಕೋಬೇ, ನಾನಿದ್ದೇನೆ ನಿನ್ನೊಂದಿಗೆ.</verse>
				<verse number="28">ಯಾವ ರಾಷ್ಟ್ರಗಳಿಗೆ ನಿನ್ನನ್ನು ಅಟ್ಟಿದೆನೋ ಆ ರಾಷ್ಟ್ರಗಳನ್ನೆಲ್ಲ ನಿರ್ಮೂಲ ಮಾಡುವೆನು. ನಿನ್ನನ್ನಾದರೋ, ನಿರ್ಮೂಲ ಮಾಡೆನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡೆನು. ಸರ್ವೇಶ್ವರನಾದ ನನ್ನ ನುಡಿ ಇದು.”</verse>
			</chapter>
			<chapter number="47">
				<verse number="1">ಫರೋಹನು ಗಾಜಾ ಊರಿಗೆ ಮುತ್ತಿಗೆ ಹಾಕುವ ಮೊದಲು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿ ಯೆರೆಮೀಯನಿಗೆ ಸರ್ವೇಶ್ವರನಿಂದ ಕೇಳಿಬಂದ ವಾಣಿ:</verse>
				<verse number="2">“ಸರ್ವೇಶ್ವರನ ವಾರ್ತೆ ಇದು: ಇಗೋ, ಬಡಗಲಿಂದ ಪ್ರವಾಹ ಹೊರಡುವುದು ತುಂಬಿತುಳುಕುವ ತೊರೆಯಾಗಿ ಬರುವುದು. ಆಕ್ರಮಿಸುವುದು ನಾಡನ್ನು, ಅದರಲ್ಲಿರುವ ಸಮಸ್ತವನ್ನು. ನಗರವನ್ನು, ಅದರ ನಿವಾಸಿಗಳನ್ನು. ಆಗ ನಾಡಿನವರೆಲ್ಲರೂ ಮೊರೆಯಿಡುವರು ದೇಶದವರೆಲ್ಲರು ಗೋಳಾಡುವರು.</verse>
				<verse number="3">ಯುದ್ಧ ಕುದುರೆಗಳೋಟದ ಶಬ್ದಕ್ಕೂ ರಥಗಳ ರಭಸಕ್ಕೂ ಚಕ್ರಗಳ ಚಟಪಟಕ್ಕೂ ಹೆದರಿ ಜೋಲುಬೀಳುವುವು ಹೆತ್ತವರ ಕೈಗಳು. ತಮ್ಮ ಮಕ್ಕಳನ್ನೂ ಹಿಂದಿರುಗಿ ನೋಡದೆ ಹೋಗುವರು.</verse>
				<verse number="4">ಆ ದಿನದಲ್ಲಿ ಸೂರೆಯಾಗುವರು ಫಿಲಿಷ್ಟಿಯರೆಲ್ಲರು ನಿರ್ಮೂಲವಾಗುವರು ಟೈರ್-ಸಿಡೋನಿನ ಸಹಾಯಕರಲ್ಲಿ ಅಳಿದುಳಿದವರು. ಸರ್ವೇಶ್ವರನೆ ನಾಶಮಾಡುವನು ಕ್ರೇಟ್ ದ್ವೀಪದಿಂದ ಉತ್ಪನ್ನರಾದ ಫಿಲಿಷ್ಟಿಯರನ್ನು.</verse>
				<verse number="5">ಗಾಜಾ ಊರು ತಲೆಬೋಳಿಸಿಕೊಂಡಿದೆ ಅಷ್ಕೆಲೋನ್ ಊರು ನಿಶ್ಶಬ್ದವಾಗಿದೆ. ಅನಕಿಮ್ ಬೈಲುನಾಡಿನ ಅವಶೇಷವೇ, ಎಂದಿನವರೆಗೆ ನಿನ್ನನ್ನೇ ಕತ್ತರಿಸಿಕೊಳ್ಳುತ್ತಿರುವೆ!</verse>
				<verse number="6">ಎಲೈ, ಸರ್ವೇಶ್ವರನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದಿರುವೆ? ಓರೆಯಲ್ಲಿ ಅವಿತುಕೊಂಡರು, ಶಾಂತಿಗೊಳ್ಳು, ಸುಮ್ಮನಿರು.</verse>
				<verse number="7">ಆ ಖಡ್ಗ ವಿಶ್ರಾಂತಿಗೊಳ್ಳುವುದು ಹೇಗೆ? ಅದಕ್ಕೆ ಸರ್ವೇಶ್ವರನೇ ಆಜ್ಞಾಪಿಸಿದ್ದಾನಲ್ಲವೇ? ಅಷ್ಕೆಲೋನಿನ ಹಾಗು ಕರಾವಳಿಯವರೆಗೆ ಅದಕ್ಕೆ ಕೆಲಸ ವಿಧಿಸಿದ್ದಾನಲ್ಲವೆ?”</verse>
			</chapter>
			<chapter number="48">
				<verse number="1">ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಮೋವಾಬನ್ನು ಕುರಿತು ಹೀಗೆನ್ನುತ್ತಾರೆ: “ನೆಬೋ ಊರಿನ ಗತಿಯನ್ನು ಅಯ್ಯೋ, ಏನೆಂದು ಹೇಳಲಿ, ಅದು ಹಾಳಾಯಿತು. ಕಿರ್ಯತಯಿಮ್ ಮಾನಭಂಗ ಹೊಂದಿದೆ ಶತ್ರು ಕೈಗೆ ಸಿಕ್ಕಿ. ಮಿಸ್ಗಾಬ್ ಅವಮಾನಕ್ಕೆ ಗುರಿಯಾಗಿದೆ ನೆಲಸಮವಾಗಿ.</verse>
				<verse number="2">ಮೋವಾಬಿನ ಕೀರ್ತಿ ಮಾಯವಾಯಿತು ಹೆಷ್ಬೋನ್ ಶತ್ರುಗಳ ಕೈವಶವಾಯಿತು. ‘ಮೋವಾಬ್ ಇನ್ನು ರಾಷ್ಟ್ರವೆನಿಸಿಕೊಳ್ಳದಷ್ಟು ಅದನ್ನು ಹಾಳುಮಾಡೋಣ ಬನ್ನಿ’ ಎಂದಿದ್ದಾರೆ ಆ ಶತ್ರುಗಳು. ಮದ್ಮೆನೇ, ನೀನೂ ಸುಮ್ಮನಾಗುವೆ, ಖಡ್ಗ ಬರುವುದು ನಿನ್ನನ್ನು ಬೆನ್ನಟ್ಟಿ.</verse>
				<verse number="3">‘ಅಯ್ಯೋ, ಸೂರೆಹೋದೆವು, ತೀವ್ರ ನಾಶವಾದೆವು!’ ಎಂಬ ಕೂಗಾಟ ಕೇಳಿಬರುತ್ತಿದೆ ಹೊರೊನಯಿಮಿನಿಂದ.</verse>
				<verse number="4">“ಮೋವಾಬ್ ನಾಶವಾಯಿತು. ಅಲ್ಲಿ ದಿಕ್ಕೆಟ್ಟವರು ಮೊರೆಯಿಟ್ಟಿರುವರು.</verse>
				<verse number="5">ಅಳುತ್ತಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಿರುವರು ‘ನಾಶವಾದೆವಲ್ಲಾ!’ ಎಂಬ ಪ್ರಾಣಸಂಕಟದ ಪ್ರಲಾಪವು ಹೊರೊನಯಿಮ್ ಇಳಿಜಾರಿನಲ್ಲಿ ಕೇಳಿಸುತ್ತಿರುವುದು.</verse>
				<verse number="6">‘ಅಡವಿಯ ಕಾಡುಕತ್ತೆಯಂತೆ ಓಡಿಹೋಗಿ ಪ್ರಾಣ ಉಳಿಸಿಕೊಳ್ಳಿ’ ಎನ್ನುತ್ತಿರುವರು.</verse>
				<verse number="7">“ಮೋವಾಬೇ, ನಿನ್ನ ಸಾಧನೆಗಳಲ್ಲೇ, ಧನರಾಶಿಗಳಲ್ಲೇ ಭರವಸೆಯಿಟ್ಟೆ. ಆದುದರಿಂದ ನೀನು ಇದೀಗಲೆ ಶತ್ರುಗಳ ಕೈವಶವಾಗುವೆ. ಕೆಮೋಷ್ ಎಂಬ ನಿನ್ನ ದೇವತೆಯೂ ಅದರ ಭಕ್ತ ಯಾಜಕರೂ ಹಾಗೂ ರಾಜ್ಯಾಧಿಕಾರಿಗಳು ಸೆರೆಗೆ ಹೋಗುವರು ಒಟ್ಟಿಗೆ.</verse>
				<verse number="8">ಸೂರೆಗಾರನು ಪ್ರತಿಯೊಂದು ನಗರದ ಮೇಲೆ ಬೀಳುವನು. ಯಾವ ಪಟ್ಟಣವೂ ಉಳಿಯದು. ಸರ್ವೇಶ್ವರನ ನುಡಿಯಂತೆಯೆ ಮೇಲ್ನಾಡು ನಾಶವಾಗುವುದು, ಬೈಲ್ನಾಡು ಹಾಳಾಗುವುದು.</verse>
				<verse number="9">ಮೋವಾಬಿಗೆ ರೆಕ್ಕೆ ಕಟ್ಟಿರಿ, ಅದು ಹಾರಿಹೋಗಲಿ ಅದರ ನಗರಗಳು ಹಾಳುಬಿದ್ದು ನಿರ್ಜನವಾಗುವುವು.</verse>
				<verse number="10">ಸರ್ವೇಶ್ವರನು ನೇಮಿಸಿದ ಕೆಲಸವನ್ನು ನಿರ್ವಹಿಸುವುದರಲ್ಲಿ ಆಲಸ್ಯನಾಗಿರುವವನು ಶಾಪಗ್ರಸ್ತನು. ತನ್ನ ಕತ್ತಿ ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ!</verse>
				<verse number="11">ಮೋವಾಬು ಚಿಕ್ಕತನದಿಂದಲೂ ನೆಮ್ಮದಿಯಾಗಿದೆ. ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ. ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ. ಅದು ಎಂದೂ ಸೆರೆಹೋಗಲಿಲ್ಲ. ಆದಕಾರಣ ಅದರ ರುಚಿ ಅದರಲ್ಲಿದೆ. ಅದರ ವಾಸನೆ ಮಾರ್ಪಡಲಿಲ್ಲ.</verse>
				<verse number="12">ಹೀಗಿರಲು ಸರ್ವೇಶ್ವರ ಇಂತೆನ್ನುತ್ತಾರೆ: “ಇಗೋ, ದಿನಗಳು ಬರಲಿವೆ. ಆಗ ನಾನು ‘ಹೊಯ್ಯತಕ್ಕವರನ್ನು’ ಅವರ ಬಳಿಗೆ ಕಳುಹಿಸುವೆನು. ಅವರು ಅದನ್ನು ಹೊಯ್ದುಬಿಡುವರು. ಪಾತ್ರೆಗಳನ್ನು ಬರಿದುಮಾಡುವರು. ಗಡಿಗೆಗಳನ್ನು ಒಡೆದುಹಾಕುವರು.</verse>
				<verse number="13">ಇಸ್ರಯೇಲ್ ವಂಶದವರು ನಂಬಿಕೆ ಇಟ್ಟಿದ್ದ ಬೇತೇಲ್ ಕ್ಷೇತ್ರವನ್ನು ಕುರಿತು ಆಶಾಭಂಗಪಟ್ಟಂತೆ ಆಗ ಮೋವಾಬ್ಯರು ತಮ್ಮ ಕೆಮೋಷ್ ದೇವತೆಯನ್ನು ಕುರಿತು ಆಶಾಭಂಗಪಡುವರು.</verse>
				<verse number="14">‘ನಾವು ಶೂರರು, ಯುದ್ಧ ಪ್ರವೀಣರು, ಪರಾಕ್ರಮಿಗಳು’ ಎಂದು ನೀವು ಹೇಳುವುದೆಂತು?</verse>
				<verse number="15">ಮೋವಾಬು ಹಾಳಾಗಿದೆ ಸುಟ್ಟುಹೋದ ಅದರ ನಗರಗಳಿಂದ ಹೊಗೆ ಎದ್ದಿದೆ. ಅದರ ಸರ್ವಶ್ರೇಷ್ಟ ಯುವಕರು ಹೋಗಿದ್ದಾರೆ ಹತರಾಗುವುದಕ್ಕೆ, ಸರ್ವಶಕ್ತ ಸರ್ವೇಶ್ವರನೆಂಬ ನಾಮವುಳ್ಳ ರಾಜಾಧಿರಾಜನ ನುಡಿಯಂತೆ.</verse>
				<verse number="16">ಮೋವಾಬಿಗೆ ದುರ್ಗತಿ ಸಮೀಪಿಸಿದೆ ಅದಕ್ಕೆ ವಿಪತ್ತು ಬೇಗ ಬರಲಿದೆ.</verse>
				<verse number="17">ಮೋವಾಬಿನ ನೆರೆಹೊರೆಯವರೇ, ಅದರ ಹೆಸರುವಾಸಿಯನ್ನು ಅರಿತವರೇ, ನೀವೆಲ್ಲರು ಅದಕ್ಕಾಗಿ ಎದೆಬಡಿದುಕೊಳ್ಳಿ! ‘ಅಯ್ಯೋ, ಶಕ್ತಿಯುತ ಚೆಂಗೋಲು, ಮಹಿಮೆಯ ದಂಡಕೋಲು ಮುರಿದುಹೋಯಿತಲ್ಲಾ!’ ಎಂದು ಪ್ರಲಾಪಿಸಿರಿ.</verse>
				<verse number="18">ಯುವತಿಯೇ, ದೀಬೋನ್ ನಗರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಕುಳಿತುಕೊ ಬಾಯಾರಿದವಳಂತೆ. ಮೋವಾಬನ್ನು ಹಾಳುಮಾಡುವವನು ನಿನಗೆ ವಿರುದ್ಧವಾಗಿ ಬಂದಿದ್ದಾನೆ. ನಿನ್ನ ಕೋಟೆಕೊತ್ತಲುಗಳನ್ನು ಅವನು ಕೆಡವಿದ್ದಾನೆ.</verse>
				<verse number="19">ಅರೋಯೇರಿನವರೇ, ದಾರಿ ಮಗ್ಗುಲಲ್ಲಿ ನಿಂತು ನೋಡಿ! ಓಡಿಹೋಗುವವನನ್ನೂ ತಪ್ಪಿಸಿಕೊಳ್ಳುವವಳನ್ನೂ ಏನಾಯಿತೆಂದು ವಿಚಾರಿಸಿರಿ.</verse>
				<verse number="20">ಮೋವಾಬು ನಾಶವಾಗಿದೆ, ಅವಮಾನಕ್ಕೆ ಈಡಾಗಿದೆ. ಗೋಳಾಡಿರಿ, ಅತ್ತು ಪ್ರಲಾಪಿಸಿರಿ! ಮೋವಾಬು ಹಾಳಾಯಿತೆಂದು ಅರ್ವೋನಿನ ತೀರದಲ್ಲೆಲ್ಲಾ ಘೋಷಿಸಿರಿ.</verse>
				<verse number="21">ಮೇಲ್ನಾಡಿಗೆ ದಂಡನೆಯಾಗಿದೆ, ಹೋಲೇನ್, ಯಾಚಾ, ಮೇಫಾತ್, ದೀಬೋನ್, ನೆಬೋ,</verse>
				<verse number="22">ಬೇತ್‍ದಿಬ್ಲಾತಯಿಮ್,</verse>
				<verse number="23">ಕಿರ್ಯಾತಯಿಮ್, ಬೇತ್ ಗಾಮೂಲ್, ಬೇತ್‍ಮೆಯೋನ್, ಕೆರೀಯೋತ್,</verse>
				<verse number="24">ಬೊಚ್ರ, ಹೀಗೆ ದೂರದ ಹತ್ತಿರದ ಮೋಬಾವಿನ ಎಲ್ಲ ನಗರಗಳಿಗೂ ದಂಡನೆಯಾಗಿದೆ.</verse>
				<verse number="25">ಮೋವಾಬಿನ ಕೊಂಬು ಕಡಿದು ಬಿದ್ದಿದೆ. ಅದರ ತೋಳು ಮುರಿದುಹೋಗಿದೆ. ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="26">“ಮೋವಾಬಿಗೆ ಅಮಲೇರುವಷ್ಟು ಕುಡಿಸಿರಿ. ಅದು ಸರ್ವೇಶ್ವರನನ್ನೆ ತಿರಸ್ಕರಿಸಿ ಉಬ್ಬಿಹೋಗಿದೆ. ತನ್ನ ವಾಂತಿಯಲ್ಲೆ ಬಿದ್ದು ಗೇಲಿ ಪರಿಹಾಸ್ಯಕ್ಕೆ ಗುರಿಯಾಗಲಿದೆ.</verse>
				<verse number="27">ಮೋವಾಬೇ, ನೀನು ಇಸ್ರಯೇಲನ್ನು ಕುರಿತು ಗೇಲಿಮಾಡುತ್ತಿದ್ದೆಯಲ್ಲವೆ? ಕಳ್ಳರ ಗುಂಪಿಗೆ ಸೇರಿ ಅದು ಸಿಕ್ಕಿಕೊಂಡಂತೆ ನಿನಗೆ ಕಾಣುತ್ತಿತ್ತೇ? ಇಸ್ರಯೇಲಿನ ಪ್ರಸ್ತಾಪ ಎತ್ತಿದಾಗಲೆಲ್ಲ ನೀನು ತಲೆಯಾಡಿಸಿ ಹಿಯ್ಯಾಳಿಸುತ್ತಿಯಲ್ಲವೆ?</verse>
				<verse number="28">“ಮೋವಾಬ್ಯರೇ, ನಗರಗಳನ್ನು ಬಿಟ್ಟು ಹೋಗಿ ಬಂಡೆಗಳ ಗುಹೆಯಲ್ಲಿ ವಾಸಮಾಡಿ. ಹಳ್ಳಕೊಳ್ಳಗಳ ಆಚೆಯ ಪಕ್ಕದಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತೆ ಜೀವಿಸಿರಿ.</verse>
				<verse number="29">ಮೋವಾಬ್ಯರಿಗೆ ಬಹಳ ಸೊಕ್ಕೇರಿದೆ! ಅವರ ಹೆಮ್ಮೆಯ ಸುದ್ದಿ, ಡಂಭಾಚಾರ, ಅಹಂಕಾರ, ಗರ್ವ, ಸ್ವಪ್ರತಿಷ್ಠೆ ಇವುಗಳ ಸಮಾಚಾರ ನಮ್ಮ ಕಿವಿಗೆ ಬಿದ್ದಿದೆ. -</verse>
				<verse number="30">ಸರ್ವೇಶ್ವರನಾದ ನಾನು ಹೇಳುವುದೇನೆಂದರೆ: ಅವರ ಗರ್ವೋದ್ರೇಕ ನನಗೆ ಗೊತ್ತಿದೆ. ಅದು ಬರೀ ಬುರುಡೆ ಮಾತ್ರ. ಅವರು ಕೊಚ್ಚಿಕೊಳ್ಳುವುದೆಲ್ಲ ನಿರರ್ಥಕವೇ ಸರಿ.</verse>
				<verse number="31">ಆದಕಾರಣ ನಾನು ಮೋವಾಬಿನ ಬಗ್ಗೆ ವಿಷಾದಿಸುತ್ತೇನೆ. ಹೌದು, ಇಡೀ ನಾಡಿನ ದುರ್ಗತಿಯನ್ನು ನೋಡಿ ಪ್ರಲಾಪಿಸುತ್ತೇನೆ. ಕೀರ್‍ಹೆರೆಸಿನವರ ವಿಷಯದಲ್ಲೂ ನನಗೆ ವ್ಯಥೆ ಇದೆ.</verse>
				<verse number="32">‘ಸಿಬ್ಮ’ದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ದುಃಖಿಸುವುದಕ್ಕಿಂತಲು ನಿನ್ನನ್ನು ಕಂಡು ಹೆಚ್ಚಾಗಿ ದುಃಖಿಸುತ್ತೇನೆ. ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿವೆ. ಈಗ ನಿನ್ನ ಹಣ್ಣುಹಂಪಲುಗಳ ಮೇಲೆ ಹಾಗು ದ್ರಾಕ್ಷೆಯ ಸುಗ್ಗಿಯ ಮೇಲೆ ಸೂರೆಗಾರ ಬಂದೆರಗಿದ್ದಾನೆ.</verse>
				<verse number="33">ಹರ್ಷಾನಂದಗಳು ತೋಟಗಳಿಂದಲೂ ಮೋವಾಬಿನ ಇಡೀ ನಾಡಿನಿಂದಲೂ ತೊಲಗಿವೆ. ತೊಟ್ಟಿಗಳಲ್ಲಿ ದ್ರಾಕ್ಷಾರಸ ಇಲ್ಲದಂತಾಗಿದೆ. ಯಾರೂ ತೊಟ್ಟಿಯಲ್ಲಿ ತುಳಿಯುತ್ತಾ ಆನಂದ ಧ್ವನಿಗೈಯುತ್ತಿಲ್ಲ. ಕೇಳಿಸುವಾ ಧ್ವನಿ ಆನಂದ ಧ್ವನಿ ಅಲ್ಲ.</verse>
				<verse number="34">ಹೆಷ್ಬೋನಿನ ಮತ್ತು ಎಲೆಯಾಲೆಯ ಜನರು ಅರಚಿಕೊಳ್ಳುತ್ತಿದ್ದಾರೆ. ಆ ಕೂಗು ಯಹಚಿನವರೆಗೆ ಕೇಳಿಸುತ್ತಿದೆ. ಚೋಯರಿನಿಂದ ಹೊರೊನಯಿಮಿನವರೆಗೆ ಮತ್ತು ಎಗ್ಲತ್ ಶೆಲೆಶೀಯದವರೆಗೆ ಆ ಕಿರಿಚಾಟ ಕೇಳಿಸುತ್ತಿದೆ. ನಿಮ್ರೀಮ್ ಹಳ್ಳವೂ ಹಾಳಾಗಿದೆ.</verse>
				<verse number="35">“ಮೋವಾಬಿನ ಪೂಜಾಸ್ಥಾನಗಳಲ್ಲಿ ಬಲಿಯರ್ಪಿಸುವುದನ್ನೂ ತಮ್ಮ ದೇವರುಗಳಿಗೆ ಧೂಪಾರತಿಯೆತ್ತುವುದನ್ನೂ ನಿಲ್ಲಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.</verse>
				<verse number="36">“ಆದುದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿಮಿತ್ತ ನನ್ನ ಹೃದಯ ಕೊಳಲಿನಂತೆ ಮೊರೆಯಿಡುತ್ತದೆ. ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿ ಮಾಯವಾಯಿತು.</verse>
				<verse number="37">ಎಲ್ಲರ ತಲೆಬೋಳು, ಎಲ್ಲರ ಗಡ್ಡ ವಿಕಾರ, ಎಲ್ಲರ ಕೈ ಗಾಯ. ಎಲ್ಲರ ನಡುವಿಗೆ ಗೋಣಿತಟ್ಟು.</verse>
				<verse number="38">ಮೋವಾಬಿನ ಎಲ್ಲ ಮಾಳಿಗೆಗಳ ಮೇಲೆಯೂ ಚೌಕಗಳಲ್ಲಿಯೂ ಒಂದೇ ರೋದನ. ಏಕೆಂದರೆ ಯಾರಿಗೂ ಬೇಡದ ಮಡಕೆಯಂತೆ ಮೋವಾಬನ್ನು ಒಡೆದುಹಾಕಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.</verse>
				<verse number="39">ಅದು ಹೇಗೆ ನುಚ್ಚುನೂರಾಗಿದೆ! ಆ ಜನರು ಕಿರಿಚಿಕೊಳ್ಳುತ್ತಿದ್ದಾರೆ! ಇಗೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ. ನೆರೆಹೊರೆಯವರು ಅಣಕಿಸುವುದಕ್ಕೂ ಬೆಚ್ಚಿಬೀಳುವುದಕ್ಕೂ ಆಸ್ಪದ ಆಗಿದೆ.” ಸರ್ವೇಶ್ವರ ಹೀಗೆನ್ನುತ್ತಾರೆ:</verse>
				<verse number="40">“ಶತ್ರುವು ಮೋವಾಬಿನ ಮೇಲೆ ಎರಗಲು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು.</verse>
				<verse number="41">ನಗರಗಳನ್ನು ಹಿಡಿಯುವನು, ಕೋಟೆಗಳನ್ನು ಆಕ್ರಮಿಸುವನು. ಆ ದಿನದಂದು, ಹೆರುವ ಹೆಂಗಸಿನ ಎದೆಯಂತೆ ಅದರುವುದು ಮೋವಾಬಿನ ಶೂರರ ಎದೆ.</verse>
				<verse number="42">ಉಬ್ಬಿಕೊಂಡು ಸರ್ವೇಶ್ವರನನ್ನೆ ತಿರಸ್ಕರಿಸಿದ ಕಾರಣ ಹಾಳಾಗಿ ಇನ್ನು ರಾಷ್ಟ್ರವೆನಿಸಿಕೊಳ್ಳದು ಮೋವಾಬ್,</verse>
				<verse number="43">ಮೋವಾಬಿನ ನಿವಾಸಿಯೇ, ಕೇಳು ನಿನಗೆ ಕಾದಿದೆ ಭೀತಿ, ಗುಳಿ, ಉರುಳು! ಇದು ಸರ್ವೇಶ್ವರನ ನುಡಿ.</verse>
				<verse number="44">ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು. ದಂಡನೆಯ ವರ್ಷವನ್ನು ಮೋವಾಬಿಗೆ ಖಂಡಿತ ಬರಮಾಡುವೆನು - ಇದು ಸರ್ವೇಶ್ವರನ ನುಡಿ.</verse>
				<verse number="45">ಪಲಾಯನವಾದವರು ಹೆಷ್ಬೋನಿನ ನೆರಳಲ್ಲಿ ನಿಂತಿದ್ದಾರೆ ಬಲಗುಂದಿದವರಾಗಿ. ಆದರೆ ಸೀಹೋನನ ರಾಜ್ಯಕ್ಕೆ ಸೇರಿದ ಆ ಹೆಷ್ಬೋನಿನಿಂದಲೆ ಹೊರಟಿದೆ ಅಗ್ನಿ. ಮೋವಾಬಿನ ಮೇರೆಯನ್ನೂ ಶಿಖರವನ್ನೂ ನುಂಗಿಬಿಟ್ಟಿದೆ ಆ ಬೆಂಕಿ.</verse>
				<verse number="46">ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ! ಕೆಮೋಷ್ ದೇವತೆಯ ಭಕ್ತರು ನಾಶವಾದರು. ನಿಮ್ಮ ಗಂಡುಹೆಣ್ಣು ಮಕ್ಕಳು ಗಡೀಪಾರಾಗಿ ಸೆರೆಯಾದರು.</verse>
				<verse number="47">ಆದರೂ ಬರಲಿರುವಾ ದಿನದಂದು ತಪ್ಪಿಸುವೆನು ಮೋವಾಬಿನ ದುರವಸ್ಥೆಯನ್ನು ಎನ್ನುತ್ತಾರೆ ಸರ್ವೇಶ್ವರ. - ಇತಿ ಮೋವಾಬನ್ನು ಕುರಿತ ತೀರ್ಪು.</verse>
			</chapter>
			<chapter number="49">
				<verse number="1">ಅಮ್ಮೋನ್ಯರನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಇಸ್ರಯೇಲಿಗೆ ಮಕ್ಕಳಿಲ್ಲವೆ? ಅದಕ್ಕೆ ನೆರವಾಗಲು ನೆಂಟನಿಲ್ಲವೆ? ಮಲ್ಕಾಮ್ ದೇವತೆಯು ಗಾದಿನ ನಾಡನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ನಗರಗಳಲ್ಲಿ ವಾಸಿಸುತ್ತಿರುವುದೇಕೆ?</verse>
				<verse number="2">ಆದುದರಿಂದ ಇಗೋ ಕೇಳಿ: ನನ್ನ ಅಪ್ಪಣೆಯ ಮೇರೆಗೆ ಶತ್ರುಗಳು ರಬ್ಬಾ ಎಂಬ ಅಮ್ಮೋನ್ಯರ ನಗರದ ಮೇಲೆ ಬಿದ್ದು ಯುದ್ಧ ಘೋಷಣೆ ಮಾಡುವ ದಿನಗಳು ಬರುವುವು. ಆ ನಗರ ಹಾಳುದಿಬ್ಬವಾಗುವುದು. ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಯೇಲ್ ತನ್ನನ್ನು ವಶಮಾಡಿಕೊಂಡವರನ್ನು ತಾನು ವಶಮಾಡಿಕೊಳ್ಳುವುದು. ಇದು ಸರ್ವೇಶ್ವರನಾದ ನನ್ನ ನುಡಿ.</verse>
				<verse number="3">ಹೆಷ್ಬೋನಿನವರೇ, ಅತ್ತುಗೋಳಾಡಿರಿ. ಆಯಿ ಎಂಬ ಊರು ಹಾಳಾಯಿತು! ರಬ್ಬಾ ನಗರಕ್ಕೆ ಸೇರಿದ ಗ್ರಾಮಗಳವರೇ ಕಿರಿಚಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. ಅತ್ತು ಪ್ರಲಾಪಿಸಿರಿ, ಕುರಿಹಟ್ಟಿಗಳಲ್ಲಿ, ಅತ್ತಿತ್ತ ಓಡಾಡಿರಿ. ಏಕೆಂದರೆ ಮಲ್ಕಾಮ್ ದೇವತೆಯೂ ಅದರ ಯಾಜಕರೂ ರಾಜ್ಯಾಧಿಕಾರಿಗಳೂ ಒಟ್ಟಾಗಿ ಸೆರೆಗೆ ಹೋಗುವರು.</verse>
				<verse number="4">“ನನ್ನ ಮೇಲೆ ಯಾರು ತಾನೆ ಬಿದ್ದಾರು?’ ಎಂದು ಸ್ವಂತ ಆಸ್ತಿಪಾಸ್ತಿಯಲ್ಲೆ ಭರವಸೆಯಿಟ್ಟ ಭ್ರಷ್ಟನಾಡೇ, “ನನ್ನ ಕಣಿವೆಗಳಲ್ಲಿ ನೀರು ತುಂಬಿಹರಿಯುತ್ತಿದೆ’ ಎಂದು ಏಕೆ ಕೊಚ್ಚಿಕೊಳ್ಳುತ್ತಿರುವೆ?</verse>
				<verse number="5">ಸೇನಾಧೀಶ್ವರ ಸರ್ವೇಶ್ವರನೆಂಬ ದೇವರು ಹೇಳುವುದನ್ನು ಕೇಳು - ನಿನ್ನ ನೆರೆಹೊರೆಯವರೆಲ್ಲರು ನಿನಗೆ ಭಯಾಸ್ಪದವಾಗುವಂತೆ ಮಾಡುವೆನು. ನಿನ್ನವರಲ್ಲಿ ಪ್ರತಿಯೊಬ್ಬನನ್ನು ನಿಂತಲ್ಲಿಂದಲೆ ಅಟ್ಟಲಾಗುವುದು. ಚದರಿಹೋದವರನ್ನು ಕೂಡಿಸಲು ಯಾರೂ ಇಲ್ಲದಂತಾಗುವುದು.</verse>
				<verse number="6">ಆದರೂ ಕಾಲಾಂತರದಲ್ಲಿ ಅಮ್ಮೋನ್ಯರ ದುರವಸ್ಥೆಯನ್ನು ನೀಗಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="7">ಎದೋಮನ್ನು ಕುರಿತು ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ತೇಮಾನ್ ನಾಡಿಗಿದ್ದ ಬುದ್ಧಿ ಏನಾಯಿತು? ವಿವೇಕಿಗಳಿಗಿದ್ದ ಆಲೋಚನಾಶಕ್ತಿ ಅಳಿದುಹೋಯಿತೋ? ಅವರ ಜ್ಞಾನ ಮಾಯವಾಯಿತೋ?</verse>
				<verse number="8">ದೇದಾನಿನವರೇ, ಹಿಂದಿರುಗಿ ಓಡಿಹೋಗಿರಿ. ಒಳ ಪ್ರಾಂತ್ಯವನ್ನು ಸೇರಿ ವಾಸಿಸಿರಿ. ಏಕೆಂದರೆ ನಾನು ಎದೋಮನ್ನು ದಂಡಿಸುವೆನು. ಏಸಾವನಿಗೆ ವಿಧಿಸಿದ್ದ ಆಪತ್ತನ್ನು ಅದರ ಮೇಲೆ ಬರಮಾಡುವೆನು.</verse>
				<verse number="9">ದ್ರಾಕ್ಷೆಯ ಹಣ್ಣನ್ನು ಕೀಳುವವರು ನಿನ್ನಲ್ಲಿಗೆ ಬಂದಿದ್ದರೆ ಹಕ್ಕಲನ್ನಾದರೂ ಉಳಿಸುತ್ತಿದ್ದರಲ್ಲವೆ? ಕಳ್ಳರು ರಾತ್ರಿವೇಳೆಯಲ್ಲಿ ಮನೆಗೆ ನುಗ್ಗಿದರೆ ತಮಗೆ ಸಾಕಾಗುವಷ್ಟನ್ನು ಮಾತ್ರ ಕೊಳ್ಳೆಹೊಡೆಯುತ್ತಿದ್ದರಲ್ಲವೆ?</verse>
				<verse number="10">ಆದರೆ ನಾನು ಏಸಾವನನ್ನು ಬರೀ ಮೈಯಾಗಿಸಿಬಿಟ್ಟಿದ್ದೇನೆ. ಅವನ ಗುಪ್ತಸ್ಥಳಗಳನ್ನು ಬಟ್ಟಬೈಲಾಗಿಸಿಬಿಟ್ಟಿದ್ದೇನೆ. ಅವಿತುಕೊಳ್ಳಲಾಗದು. ಅವನ ಸಂತಾನದವರು, ಸಹೋದರರು ಹಾಗು ನೆರೆಹೊರೆಯವರು ಹಾಳಾದರು. ಅವನೂ ಇಲ್ಲವಾದನು.</verse>
				<verse number="11">ನೀನು ನಿನ್ನ ಅನಾಥರನ್ನು ನನಗೆ ಬಿಡು. ನಾನೇ ಅವರನ್ನು ನೋಡಿಕೊಳ್ಳುತ್ತೇನೆ. ನಿನ್ನ ವಿಧವೆಯರು ನನ್ನಲ್ಲಿ ಭರವಸೆ ಇಡಲಿ.”</verse>
				<verse number="12">ಸರ್ವೇಶ್ವರ ಇಂತೆನ್ನುತ್ತಾರೆ: “ಕಷ್ಟವೆಂಬ ಕೊಡದಿಂದ ಕುಡಿಸಲು ಯಾರ ಪಾಲಿಗೆ ಬರಲಿಲ್ಲವೋ ಅಂಥವರೇ ಕುಡಿಯಬೇಕಾಗಿರುವಲ್ಲಿ ನೀನು ಅದರಿಂದ ತಪ್ಪಿಸಿಕೊಳ್ಳುವೆಯಾ? ಇಲ್ಲ, ಅದು ಸಾಧ್ಯವಿಲ್ಲ, ನೀನು ಕುಡಿದೇ ತೀರಬೇಕು.</verse>
				<verse number="13">ಬೊಚ್ರ ನಗರವು ಪಾಳುಬೀಳುವುದು. ಜನರು ಅದನ್ನು ನೋಡಿ ಬೆಚ್ಚಿಬೀಳುವರು. ಅದು ಶಾಪಕ್ಕೂ ನಿಂದೆ ಪರಿಹಾಸ್ಯಕ್ಕೂ ಗುರಿಯಾಗುವುದು. ಅದಕ್ಕೆ ಸೇರಿದ ಊರುಗಳೆಲ್ಲ ನಿತ್ಯನಾಶ ಹೊಂದುವುವು. ಇದನ್ನು ಆಣೆಯಿಟ್ಟು ಹೇಳಿದ್ದೇನೆ. ಇದು ಸರ್ವೇಶ್ವರನಾದ ನನ್ನ ನುಡಿ.</verse>
				<verse number="14">“ಎದೋಮೇ, ಸರ್ವೇಶ್ವರನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ. ‘ನೀವು ಒಟ್ಟಿಗೆ ಸೇರಿ ಯುದ್ಧಕ್ಕೆ ಹೊರಟು, ಎದೋಮಿನ ಮೇಲೆ ದಾಳಿಮಾಡಿರಿ’ ಎಂದು ಸೇವಕನ ಮೂಲಕ ರಾಷ್ಟ್ರಗಳಿಗೆ ಹೀಗೆ ಹೇಳಿಕಳುಹಿಸಿದ್ದಾರೆ.</verse>
				<verse number="15">‘ಇದೋ, ರಾಷ್ಟ್ರಗಳಲ್ಲಿ ನಿನ್ನನ್ನು ಕನಿಷ್ಠವಾಗಿಸುವೆನು, ಜನರ ತಾತ್ಸಾರಕ್ಕೆ ಈಡಾಗಿಸುವೆನು.</verse>
				<verse number="16">ಪರ್ವತಾಗ್ರಗಳಲ್ಲಿ ನೆಲೆಗೊಂಡ ಜನತೆಯೇ, ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನತೆಯೇ, ನಿನ್ನ ಭೀಕರತ್ವವೆಲ್ಲಿ? ನಿನ್ನೆದೆಯ ಗರ್ವ ನಿನ್ನನ್ನು ಮೋಸಗೊಳಿಸಿದೆ. ಹದ್ದಿನಂತೆ ನೀನು ಉನ್ನತಸ್ಥಾನದಲ್ಲಿ ಗೂಡನ್ನು ಕಟ್ಟಿಕೊಂಡರೂ ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ನನ್ನ ನುಡಿ,” ಎನ್ನುತ್ತಾರೆ ಸರ್ವೇಶ್ವರ.</verse>
				<verse number="17">“ಎದೋಮಿಗೆ ವಿಪತ್ತುಗಳು ಬಂದೊದಗುವುವು. ಅದನ್ನು ನೋಡುವವರು ಬೆರಗುಗೊಳ್ಳುವರು. ಹಾದುಹೋಗುವವರೆಲ್ಲರು ಸಿಳ್ಳುಹಾಕಿ ಪರಿಹಾಸ್ಯ ಮಾಡುವರು.</verse>
				<verse number="18">ಕೆಡುವಲಾದ ಸೊದೋಮ್, ಗೋಮೊರ ನಗರಗಳಲ್ಲೂ ಸುತ್ತಣ ಊರುಗಳಲ್ಲೂ ಆದಂತೆಯೇ ಎದೋಮಿನಲ್ಲೂ ಆಗುವುದು. ಅಲ್ಲಿ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲಸದು.</verse>
				<verse number="19">“ಎದೋಮ್ಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇದೋ ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ಏರಿಬರುವೆನು. ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯುವಂಥ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?</verse>
				<verse number="20">ಹೀಗಿರಲು, ಸರ್ವೇಶ್ವರನಾದ ನಾನು, ಎದೋಮಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ ತೇಮಾನ್ಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; ಕಾಡುಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವುವು. ಅವುಗಳ ನಾಶಕ್ಕಾಗಿ ಹುಲ್ಲುಗಾವಲು ನಿಶ್ಚಯವಾಗಿ ಕಳವಳಪಡುವುದು.</verse>
				<verse number="21">ಎದೋಮ್ಯರು ತಟ್ಟನೆ ಬೀಳುವರು, ಭೂಮಿ ಕಂಪಿಸುವುದು. ಆಗ ಉಂಟಾಗುವ ಗೋಳು ಕೆಂಪು ಸಮುದ್ರದವರೆಗೂ ಕೇಳಿಸುವುದು.</verse>
				<verse number="22">ಶತ್ರುವು ಬೊಚ್ರದ ಮೇಲೆ ಎರಗಲು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರಿ ಏರುವನು. ಆ ದಿನದಂದು ಎದೋಮಿನ ಶೂರರ ಎದೆ ಹೆರುವ ಹೆಂಗಸಿನ ಎದೆಯಂತೆ ಅದರುವುದು.</verse>
				<verse number="23">ದಮಸ್ಕಸ್ ಅನ್ನು ಕುರಿತು ಸರ್ವೇಶ್ವರ ಹೀಗೆನ್ನುತ್ತಾರೆ: “ಹಮಾತ್ ಮತ್ತು ಅರ್ಪಾದ್ ನಗರಗಳು ಆಶಾಭಂಗಗೊಂಡಿವೆ. ಅಶುಭ ಸಮಾಚಾರವನ್ನು ಕೇಳಿ ಕರಗಿಹೋಗಿವೆ. ಸಮುದ್ರದಂತೆ ಅವು ತಲ್ಲಣಗೊಂಡು ಅಶಾಂತವಾಗಿವೆ.</verse>
				<verse number="24">ದಮಸ್ಕಸ್ ಕುಂದಿದೆ, ಓಡಿಹೋಗಲು ಸಿದ್ಧವಿದೆ. ಅದಕ್ಕೆ ನಡುಕ ಹುಟ್ಟಿದೆ. ಪ್ರಸವವೇದನೆಗೆ, ಕಷ್ಟಸಂಕಟಕ್ಕೆ ಅದು ಒಳಗಾಗಿದೆ.</verse>
				<verse number="25">ಅಕಟಾ, ಹೆಸರುವಾಸಿಯಾದಂಥ ಆ ನನ್ನ ಮೆಚ್ಚುಗೆಯ ನಗರ ವಲಸೆಹೋಗಲಿಲ್ಲವೇಕೆ!</verse>
				<verse number="26">ಅದರ ದುರ್ಗತಿಯ ದಿನದಂದು ಅಲ್ಲಿನ ಯುವಕರು ಚೌಕಗಳಲ್ಲಿ ಬಿದ್ದು ಸಾಯುವರು, ಯುದ್ಧ ವೀರರೆಲ್ಲರು ಸುಮ್ಮನಿರುವರು.</verse>
				<verse number="27">ಆಗ ದಮಸ್ಕದ ಕೋಟೆಯಲ್ಲಿ ಬೆಂಕಿ ಹೊತ್ತಿಸುವೆನು. ಅದು ಬೆನ್‍ಹದದನ ಅರಮನೆಗಳನ್ನು ದಹಿಸಿಬಿಡುವುದು. ಇದು ಸರ್ವಶಕ್ತ ಸರ್ವೇಶ್ವರನಾದ ನನ್ನ ನುಡಿ.”</verse>
				<verse number="28">ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಸೋಲಿಸಿದ ಕೇದಾರನ್ನು ಮತ್ತು ಹಾಜೋರಿನ ರಾಷ್ಟ್ರಗಳನ್ನು ಕುರಿತ ಹೇಳಿಕೆ: “ಏಳಿ, ಕೇದಾರಿಗೆ ಹೋಗಿ, ಪೂರ್ವ ದೇಶದವರನ್ನು ಹಾಳುಮಾಡಿ,” ಎಂದು ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಆಜ್ಞೆಮಾಡಿದ್ದಾರೆ.</verse>
				<verse number="29">ಶತ್ರುಗಳು ಅವರ ಗುಡಾರಗಳನ್ನೂ ಹಿಂಡುಗಳನ್ನೂ ಅಪಹರಿಸಿಕೊಳ್ಳುವರು. ಅವರ ಗುಡಾರದ ಪರದೆಗಳನ್ನೂ ಸಮಸ್ತ ಸಾಮಗ್ರಿಗಳನ್ನೂ ತೆಗೆದುಕೊಂಡು ಹೋಗುವರು. ದಿಗಿಲು ನಿಮ್ಮ ಸುತ್ತಮುತ್ತಲು ಆವರಿಸಿದೆ ಎಂದು ಅವರಿಗೆ ಕೂಗಿ ಹೇಳುವರು.</verse>
				<verse number="30">ಸರ್ವೇಶ್ವರ ಹೀಗೆನ್ನುತ್ತಾರೆ: “ಹಾಜೋರಿನವರೇ, ಓಡಿಹೋಗಿ. ದೂರ ಹೋಗಿ, ಒಳಪ್ರಾಂತ್ಯಗಳಲ್ಲಿ ಅವಿತುಕೊಳ್ಳಿ. ಏಕೆಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ನಿಮಗೆ ಕೇಡನ್ನು ಮಾಡಬೇಕೆಂದಿದ್ದಾನೆ. ನಿಮ್ಮ ವಿನಾಶಕ್ಕೆ ಉಪಾಯವನ್ನು ಹೂಡಿದ್ದಾನೆ. ‘ಬಾಬಿಲೋನಿನವರೇ, ಏಳೀ! ನೆಮ್ಮದಿಯಿಂದ, ನಿರ್ಭಯವಾಗಿ ಪ್ರತ್ಯೇಕ ವಾಸಿಸುವ ಆ ರಾಷ್ಟ್ರದ ಮೇಲೆ ದಾಳಿಮಾಡಿ.</verse>
				<verse number="31">ಅದಕ್ಕೆ ಬಾಗಿಲೂ ಇಲ್ಲ, ಬೀಗವೂ ಇಲ್ಲ’ ಎನ್ನುತ್ತಿದ್ದಾನೆ.</verse>
				<verse number="32">ಅವರ ಒಂಟೆಗಳು ಕೊಳ್ಳೆಯಾಗುವುವು. ಅವರ ಲೆಕ್ಕವಿಲ್ಲದ ದನಕುರಿಗಳು ಸೂರೆಹೋಗುವುವು. ಮುಂದಲೆಗೂದಲು ಕತ್ತರಿಸಿಕೊಳ್ಳುವ ಆ ಜನರನ್ನು ಎಲ್ಲ ಕಡೆಯ ಗಾಳಿಗೂ ತೂರುವೆನು. ಎಲ್ಲ ಕಡೆಯಿಂದಲೂ ವಿಪತ್ತನ್ನು ಅವರ ಮೇಲೆ ಬರಮಾಡುವೆನು.</verse>
				<verse number="33">ಆಗ ಹಾಜೋರು ಸದಾ ಹಾಳುಬಿದ್ದು ಮರಿಗಳಿಗೆ ಬೀಡಾಗುವುದು. ಅಲ್ಲಿ ಯಾರೂ ವಾಸಿಸರು, ಯಾವ ನರಪ್ರಾಣಿಯೂ ತಂಗದು. ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="34">ಜುದೇಯದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ ಏಲಾಮಿನ ವಿಷಯವಾದ ಈ ವಾಕ್ಯವನ್ನು ಪ್ರವಾದಿ ಯೆರೆಮೀಯನಿಗೆ ನೀಡಲಾಯಿತು:</verse>
				<verse number="35">ಸೇನಾಧೀಶ್ವರ ಸರ್ವೇಶ್ವರ ಹೀಗೆಂದರು - “ಇಗೋ, ಏಲಾಮಿನ ಮುಖ್ಯ ಬಲವಾದ ಬಿಲ್ಲನ್ನು ಮುರಿದುಬಿಡುವೆನು.</verse>
				<verse number="36">ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ ಅವರನ್ನು ಆಯಾ ಗಾಳಿಗೆ ತೂರಿಬಿಡುವೆನು. ಏಲಾಮಿನಿಂದ ದೇಶಭ್ರಷ್ಟರಾದವರು ಆಶ್ರಯ ಹುಡುಕದ ರಾಜ್ಯವೇ ಇರದು.</verse>
				<verse number="37">ತಮ್ಮ ಪ್ರಾಣ ಹುಡುಕುವ ಶತ್ರುಗಳ ಮುಂದೆ ಆ ಏಲಾಮ್ಯರು ನಡುಗುವಂತೆ ಮಾಡುವೆನು. ನನ್ನ ಕೋಪಾಗ್ನಿಯ ಬಿಸಿ ಅವರಿಗೆ ತಟ್ಟುವಂತೆ ಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ. ಅವರು ನಿರ್ಮೂಲವಾಗುವ ತನಕ ಅವರ ಹಿಂದೆಯೇ ಖಡ್ಗವನ್ನು ಕಳುಹಿಸುವೆನು.</verse>
				<verse number="38">ನನ್ನ ಸಿಂಹಾಸನವನ್ನು ಏಲಾಮಿನಲ್ಲಿ ಸ್ಥಾಪಿಸಿ ಆ ನಾಡಿನ ಅರಸನನ್ನೂ ಅಧಿಕಾರಿಗಳನ್ನೂ ಅಳಿಸಿಬಿಡುವೆನು.</verse>
				<verse number="39">ಇದು ಸರ್ವೇಶ್ವರನಾದ ನನ್ನ ನುಡಿ. ಆದರೂ ಕಟ್ಟಕಡೆಯಲ್ಲಿ ಏಲಾಮಿನ ದುರವಸ್ಥೆಯನ್ನು ನೀಗಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”</verse>
			</chapter>
			<chapter number="50">
				<verse number="1">ಬಾಬಿಲೋನಿಯರ ದೇಶವಾದ ಬಾಬಿಲೋನಿಯದ ಕುರಿತು ಪ್ರವಾದಿ ಯೆರೆಮೀಯನಿಂದ ಸರ್ವೇಶ್ವರ ಸ್ವಾಮಿ ನುಡಿಸಿದ ವಾಕ್ಯ ಇದು:</verse>
				<verse number="2">“ರಾಷ್ಟ್ರಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮುಚ್ಚುಮರೆಯಿಲ್ಲದೆ ಹೀಗೆಂದು ಸಾರಿರಿ: ‘ಬಾಬಿಲೋನ್ ಶತ್ರುವಶವಾಯಿತು. ಬೇಲ್ ದೇವತೆ ನಾಚಿಕೆಗೊಂಡಿದೆ. ಮೆರೋದಾಕ್ ದೇವತೆ ಬೆಚ್ಚಿಬಿದ್ದಿದೆ. ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ. ಅದರ ಬೊಂಬೆಗಳು ಚೂರುಚೂರಾಗಿವೆ.</verse>
				<verse number="3">“ಉತ್ತರದಿಂದ ಒಂದು ರಾಷ್ಟ್ರ ಬಾಬಿಲೋನಿನ ವಿರುದ್ಧ ಬರುತ್ತಿದೆ ಅದು ಬಾಬಿಲೋನ್ ದೇಶವನ್ನು ಹಾಳುಮಾಡುವುದು. ಅಲ್ಲಿ ಯಾರೂ ವಾಸಿಸರು. ಜಾನುವಾರುಗಳೂ ಜನರೂ ಓಡಿಹೋಗಿದ್ದಾರೆ, ತೊಲಗಿಬಿಟ್ಟಿದ್ದಾರೆ.”</verse>
				<verse number="4">ಸರ್ವೇಶ್ವರ ಹೀಗೆನ್ನುತ್ತಾರೆ: “ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಯೇಲರೂ ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ಬರುವರು. ದಾರಿಯುದ್ದಕ್ಕೂ ಅಳುತ್ತಾ ಬಂದು ತಮ್ಮ ದೇವರಾದ ಸರ್ವೇಶ್ವರನನ್ನು ಮರೆಹೋಗುವರು.</verse>
				<verse number="5">ಸಿಯೋನಿಗೆ ಅಭಿಮುಖರಾಗಿ, ಮಾರ್ಗವನ್ನು ವಿಚಾರಿಸುತ್ತಾ, ‘ಬನ್ನಿ, ಸರ್ವೇಶ್ವರನನ್ನು ಆಶ್ರಯಿಸಿ, ಎಂದಿಗೂ ಮರೆಯಲಾಗದ ಶಾಶ್ವತ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು.</verse>
				<verse number="6">“ನನ್ನ ಜನರು ದಾರಿತಪ್ಪಿದ ಕುರಿಗಳು. ಕುರಿಗಾಹಿಗಳು ಅವರನ್ನು ದಾರಿ ತಪ್ಪಿಸಿ ಪರ್ವತಗಳಲ್ಲಿ ಅಲೆದಾಡಿಸಿದ್ದಾರೆ. ನನ್ನ ಜನರು ತಮ್ಮ ಬೀಡುಗಳನ್ನು ಮರೆತು ಬೆಟ್ಟಗುಡ್ಡಗಳಲ್ಲಿ ತಿರುಗಾಡುತ್ತಿದ್ದಾರೆ.</verse>
				<verse number="7">ಕಂಡಕಂಡವರೆಲ್ಲರು ಅವರನ್ನು ಕಬಳಿಸಿದ್ದಾರೆ. ಅವರ ವಿರೋಧಿಗಳು, ‘ನಾವು ಅವರನ್ನು ಕಬಳಿಸಿದ್ದು ದೋಷವಲ್ಲ, ಏಕೆಂದರೆ, ಸತ್ಯಸ್ವರೂಪರಾದ ಸರ್ವೇಶ್ವರನಿಗೆ, ತಮ್ಮ ಪೂರ್ವಜರ ನಂಬಿಕೆ ನಿರೀಕ್ಷೆಯಾದ ಸರ್ವೇಶ್ವರನಿಗೆ ವಿರುದ್ಧ ಅವರು ಪಾಪಮಾಡಿದ್ದಾರೆ,’ ಎಂದುಕೊಂಡರು.</verse>
				<verse number="8">“ಬಾಬಿಲೋನ್ ದೇಶದಿಂದ ಓಡಿಹೋಗಿ, ಬಾಬಿಲೋನಿಯರ ಆ ಸೀಮೆಯಿಂದ ಹೊರಡಿ. ಹಿಂಡುಗಳ ಮುಂದೆ ನಡೆಯುವ ಹೋತಗಳಂತೆ ಮುಂತೆರಳಿರಿ.</verse>
				<verse number="9">ಇಗೋ, ದೊಡ್ಡ ರಾಷ್ಟ್ರಗಳ ಸಮೂಹವನ್ನು ಎಬ್ಬಿಸಿ ಉತ್ತರದಿಂದ ಬಾಬಿಲೋನಿಯದ ಮೇಲೆ ಬೀಳಮಾಡುವೆನು. ಅವು ಬಾಬಿಲೋನಿಗೆ ವಿರುದ್ಧ, ವ್ಯೂಹಕಟ್ಟಿ ಅದನ್ನು ಬುಡಮೇಲು ಮಾಡುವುವು. ಅವುಗಳು ಪ್ರಯೋಗಿಸುವ ಬಾಣಗಳು ಯುದ್ಧ ಪ್ರವೀಣ ಶೂರನಂತಿರುವುವು; ಅವು ಸುಮ್ಮನೆ ಹಿಂದಿರುಗವು.</verse>
				<verse number="10">ಬಾಬಿಲೋನಿಯದ ರಾಜ್ಯ ಸೂರೆಯಾಗುವುದು. ಅದನ್ನು ಕೊಳ್ಳೆಹೊಡೆಯುವವರೆಲ್ಲರು ಸಂತೃಪ್ತಿಗೊಳ್ಳುವರು. ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="11">“ನನ್ನ ಸೊತ್ತಾದವರನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುತ್ತಿದ್ದೀರಿ! ಕಣ ತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿದ್ದೀರಿ. ಕೊಬ್ಬಿದ ಕುದುರೆಗಳಂತೆ ಕೆನೆಯುತ್ತಿದ್ದೀರಿ.</verse>
				<verse number="12">ಆದರೆ ನಿಮ್ಮ ಮಾತೃಭೂಮಿ ಮಾನಭಂಗಕ್ಕೆ ಈಡಾಗುವುದು. ನಿಮ್ಮನ್ನು ಹೆತ್ತ ರಾಜ್ಯ ನಾಚಿಕೊಳ್ಳುವುದು. ಹೌದು, ಅದು ಕಾಡಾಗುವುದು. ಕಗ್ಗಾಡು, ಬೆಂಗಾಡು ಆಗುವುದು. ರಾಷ್ಟ್ರಗಳಲ್ಲಿ ಅದು ಕನಿಷ್ಟವಾಗುವುದು.</verse>
				<verse number="13">ಸರ್ವೇಶ್ವರನ ಕೋಪದ ನಿಮಿತ್ತ ಅದು ನಿರ್ಜನವಾಗುವುದು. ಪೂರ್ತಿಯಾಗಿ ಅದು ಪಾಳುಬೀಳುವುದು. ಬಾಬಿಲೋನನ್ನು ಹಾದುಹೋಗುವವರೆಲ್ಲರು ಅದಕ್ಕೆ ಬಂದೊದಗಿದ ವಿಪತ್ತುಗಳನ್ನು ಕಂಡು ನಿಬ್ಬೆರಗಾಗುವರು, ಸಿಳ್ಳುಹಾಕಿ ಮೂದಲಿಸುವರು.</verse>
				<verse number="14">“ಬಿಲ್ಲುಗಾರರೇ, ನೀವೆಲ್ಲರು ವ್ಯೂಹಕಟ್ಟಿ ಬಾಬಿಲೋನಿಗೆ ಮುತ್ತಿಗೆಹಾಕಿರಿ. ಬಾಣಗಳನ್ನು ಮಿಗಿಸದೆ ಎಸೆಯಿರಿ. ಅದು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದೆ.</verse>
				<verse number="15">ಆದರ ಸುತ್ತಲು ರಣಘೋಷಮಾಡಿರಿ. ಇಗೋ, ಅದು ಶರಣಾಗತವಾಯಿತು! ಅದರ ಕೋಟೆಕೊತ್ತಲಗಳು ಬಿದ್ದವು. ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಸರ್ವೇಶ್ವರನಾದ ನಾನು ಅದಕ್ಕೆ ಮುಯ್ಯಿತೀರಿಸಿದ್ದೇನೆ. ನೀವೂ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ.</verse>
				<verse number="16">ಬೀಜಬಿತ್ತುವವನಾಗಲಿ, ಸುಗ್ಗಿಯಲ್ಲಿ ಕುಡುಗೋಲು ಹಿಡಿಯುವವನಾಗಲಿ ಆ ಬಾಬಿಲೋನಿನಲ್ಲಿ ಇಲ್ಲದಂತೆ ಮಾಡಿ. ಪ್ರತಿಯೊಬ್ಬ ವಿದೇಶಿಯನು ಹತ್ಯಮಾಡುವ ಆ ಖಡ್ಗದ ಮುಂದೆ ನಿಲ್ಲಲಾಗದೆ ಸ್ವಜನರ ಕಡೆಗೆ ತಿರುಗಿಕೊಂಡು ಸ್ವದೇಶಕ್ಕೆ ಓಡಿಹೋಗುವನು.</verse>
				<verse number="17">“ಇಸ್ರಯೇಲ್ ಚದರಿಹೋದ ಮಂದೆ. ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ. ಮೊಟ್ಟಮೊದಲು ಅಸ್ಸೀರಿಯಾದ ಅರಸನು ಅದನ್ನು ಕಬಳಿಸಿದನು. ಕಟ್ಟಕಡೆಗೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.</verse>
				<verse number="18">ಹೀಗಿರಲು, ಇಸ್ರಯೇಲಿನ ದೇವರೂ ಸೇನಾಧೀಶ್ವರನೂ ಸರ್ವೇಶ್ವರನೂ ಆದ ನಾನು ಹೇಳುವುದು ಇದು: ಅಸ್ಸೀರಿಯಾದ ಅರಸನನ್ನು ನಾನು ದಂಡಿಸಿದಂತೆ ಬಾಬಿಲೋನಿನ ಅರಸನನ್ನೂ ಅವನ ದೇಶವನ್ನೂ ದಂಡಿಸುವೆನು.</verse>
				<verse number="19">ಇಸ್ರಯೇಲೆಂಬ ಮಂದೆಯನ್ನು ಮರಳಿ ಅದರ ಹುಲ್ಲುಗಾವಲಿಗೆ ಸೇರಿಸುವೆನು. ಅದು ಕರ್ಮೆಲಿನಲ್ಲೂ ಭಾಷಾನಿನಲ್ಲೂ ಮೇಯುವುದು. ಎಫ್ರಯಿಮಿನ ಮತ್ತು ಗಿಲ್ಯಾದಿನ ಗುಡ್ಡಗಳಲ್ಲಿ ಹೊಟ್ಟೆತುಂಬ ತಿನ್ನುವುದು.</verse>
				<verse number="20">ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಸಿಗದು. ಜುದೇಯದ ಪಾಪವನ್ನು ತಡಕಿದರೂ ಸಿಗದು. ಏಕೆಂದರೆ ನಾನು ಉಳಿಸಿದ ಜನಶೇಷವನ್ನು ಕ್ಷಮಿಸಿಬಿಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="21">ಸರ್ವೇಶ್ವರ ಹೀಗೆನ್ನುತ್ತಾರೆ: “ಮೆರಾಥಯಿಮ್ ನಾಡಿಗೂ ಪಕೋದಿನ ನಿವಾಸಿಗಳಿಗೂ ವಿರುದ್ಧ ದಂಡೆತ್ತಿಹೋಗಿ ಅವರನ್ನು ಸಂಹರಿಸು. ಆ ನಾಡನ್ನು ಪೂರ್ತಿಯಾಗಿ ಹಾಳುಮಾಡು. ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು.</verse>
				<verse number="22">ಇಗೋ ಯುದ್ಧದ ಆರ್ಭಟ! ಮಹಾವಿನಾಶದ ಕೂಗಾಟ ನಾಡಿನೊಳಗೆಲ್ಲ!</verse>
				<verse number="23">ಲೋಕವನ್ನೆಲ್ಲ ಬಡಿದ ಕೊಡಲಿಯಂಥ ಬಾಬಿಲೋನ್ ಈಗ ಮುರಿದು ಚೂರುಚೂರಾಗಿದೆ! ಆ ರಾಜ್ಯವು ರಾಷ್ಟ್ರಗಳ ನಡುವೆ ಹಾಳಾಗಿ ಬಿದ್ದಿದೆ.</verse>
				<verse number="24">ಬಾಬಿಲೋನೇ, ನಿನಗೆ ನಾನು ಉರುಲೊಡ್ಡಿದ್ದೆ. ನೀನು ತಿಳಿಯದೆ ಅದರಲ್ಲಿ ಸಿಕ್ಕಿಕೊಂಡೆ. ನೀನು ಸರ್ವೇಶ್ವರನೊಂದಿಗೆ ಹೋರಾಡಿದ್ದರಿಂದ ಬೋನಿನ ವಶವಾದೆ.</verse>
				<verse number="25">ಸೇನಾಧೀಶ್ವರ ಸರ್ವೇಶ್ವರನೆಂಬ ದೇವರು ಬಾಬಿಲೋನಿನ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದು ಉಂಟು. ಅದಕ್ಕಾಗಿ ಸರ್ವೇಶ್ವರನಾದ ನಾನು ನನ್ನ ಆಯುಧ ಶಾಲೆಯನ್ನು ತೆರೆದಿದ್ದೇನೆ. ನನ್ನ ಕೋಪದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದೇನೆ.</verse>
				<verse number="26">ಲೋಕದ ಕಟ್ಟಕಡೆಯಿಂದ ಬಾಬಿಲೋನಿಗೆ ಬನ್ನಿ. ಅದರ ಕಣಜಗಳನ್ನು ತೆರೆಯಿರಿ. ಆ ನಗರವನ್ನು ಹಾಳುದಿಬ್ಬವನ್ನಾಗಿ ಮಾಡಿ ಪೂರ್ತಿಯಾಗಿ ನಾಶಪಡಿಸಿರಿ. ಅದರಲ್ಲಿ ಏನೂ ಉಳಿಯದಿರಲಿ.</verse>
				<verse number="27">ಅದರ ಗೂಳಿಗಳನ್ನೆಲ್ಲ ಕೊಲ್ಲಿರಿ. ಹೋಗಲಿ ಅವು ವಧ್ಯಸ್ಥಾನಕ್ಕೆ. ಅವುಗಳಿಗೆ ಧಿಕ್ಕಾರ. ಅವುಗಳಿಗೆ ಬಂದಿದೆ ವಿಪತ್ಕಾಲ! ಸಮೀಪಿಸಿದೆ ದಂಡನೆಯ ದಿನ!</verse>
				<verse number="28">“ಇಗೋ, ಬಾಬಿಲೋನಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಸರ್ವೇಶ್ವರನು ತನ್ನ ಆಲಯವನ್ನುನಾಶಮಾಡಿದವರಿಗೆ ಮುಯ್ಯಿತೀರಿಸಿದ್ದಾರೆ ಎಂಬ ಸಮಾಚಾರವನ್ನು ಸಿಯೋನಿನಲ್ಲಿ ಸಾರಲು ಧಾವಿಸುತ್ತಿದ್ದಾರೆ ಆ ಜನ.</verse>
				<verse number="29">“ಬಿಲ್ಲುಬಾಣಗಾರರನ್ನೆಲ್ಲ ಬಾಬಿಲೋನಿಗೆ ಕರೆಯಿರಿ. ಅದರ ಸುತ್ತಲು ದಂಡಿಳಿಸಿರಿ. ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಗರ್ವದಿಂದ ಅದು ಇಸ್ರಯೇಲರ ಪರಮ ಪಾವನನಾದ ಸರ್ವೇಶ್ವರನನ್ನು ಅಸಡ್ಡೆಮಾಡಿದೆ.</verse>
				<verse number="30">ಆದಕಾರಣ ಆ ದಿನದಂದು ಅಲ್ಲಿ ಯುವಕರು ಬೀದಿ ಚೌಕಗಳಲ್ಲಿ ಬಿದ್ದು ಸಾಯುವರು. ಯುದ್ಧವೀರರೆಲ್ಲರು ಸತ್ತು ಸ್ತಬ್ದರಾಗುವರು. ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="31">ಸೇನಾಧೀಶ್ವರ ಸರ್ವೇಶ್ವರನಾದ ದೇವರು ಹೀಗೆನ್ನುತ್ತಾರೆ: “ಎಲೈ ಅಹಂಕಾರಿಯೇ, ನಾನು ನಿನಗೆ ವಿರುದ್ಧನು. ನಿನಗೆ ಹೊತ್ತು ಬಂದಿದೆ. ನಿನ್ನನ್ನು ದಂಡಿಸತಕ್ಕ ಕಾಲ ಸಮೀಪಿಸಿದೆ.</verse>
				<verse number="32">ಅಹಂಕಾರದಿಂದ ಕೂಡಿದ ರಾಜ್ಯ ಎಡವಿ ಬೀಳುವುದು. ಅದನ್ನು ಯಾರೂ ಎತ್ತರು. ಅದರ ನಗರಗಳಿಗೆ ಬೆಂಕಿಹೊತ್ತಿಸುವೆನು. ಅದು ಸುತ್ತಮುತ್ತಣದನ್ನೆಲ್ಲ ನುಂಗಿಬಿಡುವುದು.”</verse>
				<verse number="33">ಸೇನಾಧೀಶ್ವರರಾದ ಸರ್ವೇಶ್ವರ ಹೀಗೆ ಎನ್ನುತ್ತಾರೆ: “ಇಸ್ರಯೇಲಿನ ಹಾಗು ಜುದೇಯದ ಜನರಿಬ್ಬರೂ ಹಿಂಸೆಗೆ ಗುರಿಯಾಗಿದ್ದಾರೆ. ಅವರನ್ನು ಸೆರೆಗೆ ಒಯ್ದವರೆಲ್ಲರು ಅವರನ್ನು ಬಿಡುವುದಿಲ್ಲವೆಂದು ಪಟ್ಟುಹಿಡಿದಿದ್ದಾರೆ.</verse>
				<verse number="34">ಅವರನ್ನು ಬಿಡಿಸಬಲ್ಲವನು ಬಲಿಷ್ಠನು. ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದೇ ಆತನ ನಾಮಧೇಯ. ಆತನೇ ಅವರ ವ್ಯಾಜ್ಯವನ್ನು ಜಯಿಸಿ, ನಾಡಿಗೆ ಶಾಂತಿಯನ್ನು ತಂದು, ಬಾಬಿಲೋನಿಯದವರಿಗೆ ಕಳವಳವನ್ನುಂಟುಮಾಡುವನು.”</verse>
				<verse number="35">ಸರ್ವೇಶ್ವರ ಇಂತೆನ್ನುತ್ತಾರೆ: ಬಾಬಿಲೋನಿಯರ ಮೇಲೆ ಬೀಳಲಿದೆ ಖಡ್ಗ ಅದರ ಜನಸಾಮಾನ್ಯರನ್ನು, ಪದಾಧಿಕಾರಿಗಳನ್ನು, ಪಂಡಿತರನ್ನು ಇವರೆಲ್ಲರನ್ನು ಹತಿಸಲಿದೆ ಆ ಖಡ್ಗ.</verse>
				<verse number="36">ಅದು ಇರಿಯಲಿ ಕೊಚ್ಚಿಕೊಳ್ಳುವವರನ್ನು ಬಯಲಿಗೆಳೆಯಲಿ ಅವರ ಬುದ್ಧಿಹೀನತೆಯನ್ನು ಸಂಹರಿಸಲಿ ಆ ಬಾಬಿಲೋನಿನ ಶೂರರನ್ನು ಬೆಬ್ಬರಬೀಳುವಂತಾಗಿಸಲಿ ಅವರೆಲ್ಲರನ್ನು.</verse>
				<verse number="37">ಹೊಡೆಯಲಿ ಅಶ್ವಗಳನ್ನೂ ರಥಗಳನ್ನೂ ಬಾಬಿಲೋನಿನಲ್ಲಿರುವ ನಾನಾ ವಿದೇಶಿಯರನ್ನೂ ಬೆದರಿಸಲಿ ಅವರ ಹೆಂಗಸರನ್ನು, ಕಬಳಿಸಲಿ, ಸೂರೆಮಾಡಲಿ ಆ ಖಡ್ಗ ಅವರ ಸಂಪತ್ತನ್ನು.</verse>
				<verse number="38">ಅವರ ನೀರನ್ನೆಲ್ಲ ಹೀರಲಿ ಬೇಗನೆ ಬತ್ತಿಹೋಗಲಿ ಅವರ ತೊರೆ. ಅಕಟಾ! ತುಂಬಿದೆ ಆ ದೇಶ ಬೊಂಬೆಗಳಿಂದ ಮದವೇರಿದೆ ಅದರ ಜನತೆಗೆ ವಿಗ್ರಹಾರಾಧನೆಯಿಂದ.</verse>
				<verse number="39">ಈ ಕಾರಣ, ತೋಳಗಳೂ ಕಾಡುಮೃಗಗಳೂ ಬೀಡುಮಾಡುವುವಲ್ಲಿ. ಉಷ್ಟ್ರಪಕ್ಷಿಗಳೂ ತಂಗುವುವು ಅಲ್ಲಿ. ಅದೆಂದಿಗೂ ನಿವಾಸಸ್ಥಳ ಆಗದು ತಲತಲಾಂತರಕ್ಕೂ ಜನರು ಅಲ್ಲಿ ಒಕ್ಕಲಿರರು.</verse>
				<verse number="40">ಯಾರೂ ನೆಲಸಲಾಗಲಿಲ್ಲ ನಾನು ಕೆಡವಿದಾ ಸೊದೋಮ್ ಗೊಮೋರ ನಗರಗಳಲ್ಲಿ ಅದರ ಸುತ್ತಮುತ್ತಣ ಊರುಗಳಲ್ಲಿ ಯಾರೂ ವಾಸಿಸರು ಯಾವ ನರಪ್ರಾಣಿಯೂ ನೆಲಸದು, ಬಾಬಿಲೋನಿನಲ್ಲಿ.</verse>
				<verse number="41">ಇಗೋ ರಾಷ್ಟ್ರವೊಂದು ಬರುವುದು ಉತ್ತರದಿಂದ: ಎಚ್ಚರಗೊಳ್ವರು ಮಹಾಜನ ಹಾಗೂ ಅರಸರು ಬಹುಮಂದಿ ಬರುವರವರು ಲೋಕದ ಕಟ್ಟಕಡೆಯಿಂದ.</verse>
				<verse number="42">ಆ ಕ್ರೂರಿಗಳು, ಆ ನಿಷ್ಕರುಣಿಗಳು ಹಿಡಿದುಕೊಂಡಿರುವರು ಬಿಲ್ಲನ್ನೂ ಈಟಿಯನ್ನೂ. ಅವರ ಧ್ವನಿ ಮೊರೆಯುತ್ತದೆ ಸಮುದ್ರದಂತೆ ಕುದುರೆ ಸವಾರಿ ತೊಡಗಲಿದೆ. ಬಾಬಿಲೋನ್ ನಗರಿಯೇ, ಕೇಳು, ಆ ಸೈನ್ಯ ಶೂರವೀರರಿಂದ ಕೂಡಿದೆ. ಅದು ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ. ಸರ್ವೇಶ್ವರನಾದ ನನ್ನ ನುಡಿ ಇದು.</verse>
				<verse number="43">ಈ ಸುದ್ದಿ ಬಿತ್ತು ಬಾಬಿಲೋನಿನ ಅರಸನ ಕಿವಿಗೆ ಅವನ ಕೈಗಳಿದೋ ಜೋಲುಬಿದ್ದಿವೆ ಅವನನ್ನು ಹಿಡಿದಿದೆ ಪ್ರಸವವೇದನೆಯಂಥ ಯಾತನೆ.</verse>
				<verse number="44">ಬಾಬಿಲೋನಿಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇಗೋ, ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ನಾನು ಏರಿಬರುವೆನು. ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯಬಲ್ಲ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?</verse>
				<verse number="45">ಹೀಗಿರಲು, ಸರ್ವೇಶ್ವರನು ಬಾಬಿಲೋನಿಯರ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನು, ಅದರ ಕಸ್ದೀಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನು ಆಲಿಸಿರಿ: ಕಾಡುಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವುವು. ಅವುಗಳ ನಾಶಕ್ಕಾಗಿ ಹುಲ್ಲುಗಾವಲು ನಿಶ್ಚಯವಾಗಿ ಕಳವಳಪಡುವುದು.</verse>
				<verse number="46">ಬಾಬಿಲೋನ್ ಶತ್ರುವಶ ಆಯಿತೆಂಬ ಕೋಲಾಹಲಕ್ಕೆ ಭೂಮಿ ಕಂಪಿಸುವುದು. ಅದರ ಮೊರೆ ರಾಷ್ಟ್ರಗಳಿಗೆ ಕೇಳಿಸುವುದು.</verse>
			</chapter>
			<chapter number="51">
				<verse number="1">ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಇಗೋ, ನಾನು ಬಾಬಿಲೋನಿನ ಮೇಲೂ ಅದರ ಲೇಬ್‍ಕಾಮೈ ಪ್ರಜೆಗಳ ಮೇಲೂ ವಿನಾಶಕಾರಿಯಾದ ಗಾಳಿಬೀಸುವಂತೆ ಮಾಡುವೆನು.</verse>
				<verse number="2">ಅನ್ಯಜನರನ್ನು ಬಾಬಿಲೋನಿಗೆ ಕಳುಹಿಸುವೆನು. ಅವರು ಅದನ್ನು ಗಾಳಿಗೆ ತೂರಿಬಿಡುವರು. ನಿಯಮಿತ ವಿಪತ್ಕಾಲದಲ್ಲಿ ಆ ದೇಶಕ್ಕೆ ಮುತ್ತಿಗೆ ಹಾಕಿ ಅದನ್ನು ಬಟ್ಟಬರಿದು ಮಾಡುವರು.</verse>
				<verse number="3">ಅದರ ಧನುರ್ಧಾರಿಗಳಿಗೂ ಕವಚ ಸನ್ನದ್ಧರಿಗೂ ಬಿಲ್ಲುಬಾಣಗಳನ್ನೆಸೆಯಲು ಅವಕಾಶವಿಲ್ಲದಿರಲಿ. ಬಾಬಿಲೋನಿಯದ ಯುವಕರನ್ನು ಉಳಿಸದಿರಿ. ಅದರ ಸೈನಿಕರನ್ನೆಲ್ಲ ನಿಶ್ಶೇಷಮಾಡಿರಿ.</verse>
				<verse number="4">ಬಾಬಿಲೋನಿಯರು ತಮ್ಮ ದೇಶದಲ್ಲೆ ಹತರಾಗಿ ಬೀಳುವರು. ಅದರ ಬೀದಿಗಳಲ್ಲೆ ಕತ್ತಿಗೆ ತುತ್ತಾಗಿ ಮಣ್ಣುಪಾಲಾಗುವರು.</verse>
				<verse number="5">ಇಸ್ರಯೇಲರ ಪರಮ ಪಾವನ ಸ್ವಾಮಿಯಾದ ನನಗೆ ನನ್ನ ಜನರು ಮಾಡಿದ ಅಪರಾಧ ತಮ್ಮ ನಾಡಿನಲ್ಲಿ ತುಂಬಿದ್ದರೂ ಸೇನಾಧೀಶ್ವರ ಸರ್ವೇಶ್ವರನೆಂಬ ದೇವರಾದ ನಾನು ಇಸ್ರಯೇಲನ್ನಾಗಲಿ ಜುದೇಯವನ್ನಾಗಲಿ ತ್ಯಜಿಸಿಬಿಡಲಿಲ್ಲ.</verse>
				<verse number="6">ನೀವು ಬಾಬಿಲೋನಿನಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿ, ಅದಕ್ಕೆ ಉಂಟಾಗುವ ದಂಡನೆಗೆ ನೀವು ಒಳಗಾಗಬೇಡಿ. ಸರ್ವೇಶ್ವರನಾದ ನಾನು ಮುಯ್ಯಿತೀರಿಸುವ ಕಾಲಬಂದಿದೆ. ಬಾಬಿಲೋನಿಗೆ ತಕ್ಕ ಪ್ರತೀಕಾರ ಮಾಡುವೆನು.</verse>
				<verse number="7">ಬಾಬಿಲೋನ್ ನನ್ನ ಕೈಯಲ್ಲಿರುವ ಹೊನ್ನಿನ ಪಾನಪಾತ್ರೆ. ಲೋಕದವರೆಲ್ಲರು ಅದರಿಂದ ಕುಡಿದು ಮತ್ತರಾದರು. ರಾಷ್ಟ್ರಗಳು ಅದರಿಂದ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.</verse>
				<verse number="8">ಬಾಬಿಲೋನ್ ತಟ್ಟನೆ ಬಿದ್ದು ಹಾಳಾಯಿತು. ಅದಕ್ಕಾಗಿ ಗೋಳಾಡಿ. ಅದರ ನೋವನ್ನು ನೀಗಿಸಲು ಔಷಧವನ್ನು ತನ್ನಿ. ಒಂದು ವೇಳೆ ಅದು ಗುಣವಾದೀತು!</verse>
				<verse number="9">ಅಲ್ಲಿರುವ ಹೊರನಾಡಿಗರು, ‘ಬಾಬಿಲೋನನ್ನು ಸ್ವಸ್ಥಮಾಡಲು ನಾವು ಪ್ರಯತ್ನಿಸಿದೆವು. ಆದರೆ ಅದು ಸ್ವಸ್ಥವಾಗಲಿಲ್ಲ. ಬಾಬಿಲೋನನ್ನು ಬಿಟ್ಟು ನಾವೆಲ್ಲರು ನಮ್ಮ ನಮ್ಮ ನಾಡುಗಳಿಗೆ ಹೋಗೋಣ. ಅದು ಪಡೆಯಬೇಕಾದ ದಂಡನೆ ಆಕಾಶ ಮುಟ್ಟುವಷ್ಟು ದೊಡ್ಡದು, ಹೌದು, ಅದು ಗಗನದವರೆಗೂ ಬೆಳೆದಿದೆ,” ಎನ್ನುವರು.</verse>
				<verse number="10">‘ಸರ್ವೇಶ್ವರ ನಮ್ಮ ಧಾರ್ಮಿಕತೆಯನ್ನು ವ್ಯಕ್ತಪಡಿಸಿದ್ದಾರೆ. ನಮ್ಮ ದೇವರಾದ ಸರ್ವೇಶ್ವರ ನಡೆಸಿದ ಮಹತ್ಕಾರ್ಯವನ್ನು ಸಿಯೋನಿನಲ್ಲಿ ಪ್ರಕಟಿಸೋಣ ಬನ್ನಿ’ ಎಂದು ಹೇಳುವರು.”</verse>
				<verse number="11">ಸರ್ವೇಶ್ವರನು ಬಾಬಿಲೋನನ್ನು ಹಾಳುಮಾಡಬೇಕೆಂದು ಉದ್ದೇಶಿಸಿ, ಅದನ್ನು ಮೇದ್ಯರ ಅರಸರು ನಾಶಮಾಡುವಂತೆ ಅವರನ್ನು ಪ್ರೇರೇಪಿಸಿದ್ದಾರೆ. ಆ ನಾಶವು, ಸರ್ವೇಶ್ವರನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ ಆಗಿದೆ. ‘ಮೇದ್ಯರೇ, ಬಾಣಗಳನ್ನು ಮಸೆಯಿರಿ, ಯುದ್ಧಸನ್ನದ್ಧರಾಗಿರಿ;</verse>
				<verse number="12">ಬಾಬಿಲೋನಿನ ಕೋಟೆಗೆ ಎದುರಾಗಿ ಧ್ವಜವೆತ್ತಿರಿ. ಪಹರೆಯನ್ನು ಬಲಪಡಿಸಿರಿ. ಕಾವಲುಗಾರರನ್ನು ನಿಲ್ಲಿಸಿರಿ. ಹೊಂಚುಗಾರರನ್ನು ಗೊತ್ತುಮಾಡಿರಿ!’ ಸರ್ವೇಶ್ವರ ಸ್ವಾಮಿ ಬಾಬಿಲೋನಿನವರ ವಿಷಯದಲ್ಲಿ ನುಡಿದಿದ್ದನ್ನು ನೆನಪಿಗೆ ತಂದುಕೊಂಡು ನೆರವೇರಿಸಿದ್ದಾರೆ.</verse>
				<verse number="13">“ಬಹುಜಲಾಶ್ರಯಗಳ ನಡುವೆ ನಿಂತಿರುವ ನಗರಿಯೇ, ಧನಭರಿತ ಪುರಿಯೇ, ನಿನ್ನ ಅಂತ್ಯಕಾಲವು ಬಂದಿದೆ. ನೀನು ಕೊಳ್ಳೆಹೊಡೆದದ್ದು ಸಾಕಾಗಿದೆ.”</verse>
				<verse number="14">ಸೇನಾಧೀಶ್ವರ ಸರ್ವೇಶ್ವರ ತಮ್ಮ ಮೇಲೆ ಆಣೆಯಿಟ್ಟು ಹೇಳುವುದು ಇದು: “ಖಂಡಿತವಾಗಿ ನಾನು ಮಿಡತೆಗಳಷ್ಟು ಅಸಂಖ್ಯ ಜನರಿಂದ ನಿನ್ನನ್ನು ತುಂಬಿಸುವೆನು. ಅವರು ನಿನ್ನ ಮೇಲೆ ಜಯಘೋಷಮಾಡುವರು.”</verse>
				<verse number="15">ಆತ ಭೂಮಿಯನ್ನು ನಿರ್ಮಿಸಿದ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ ವಿವೇಕದಿಂದ.</verse>
				<verse number="16">ಆತನ ಘರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ ಭುವಿಯ ಕಟ್ಟಕಡೆಯಿಂದ ಮೋಡ ಮೇಲೇರುತ್ತದೆ ಮಳೆಗೋಸ್ಕರ ಮಿಂಚು ಹೊಳೆಯುತ್ತದೆ ಆತನ ಭಂಡಾರದಿಂದ ಗಾಳಿ ಬೀಸುತ್ತದೆ.</verse>
				<verse number="17">ಇದರ ಮುಂದೆ ಜನರು ತಿಳುವಳಿಕೆಯಿಲ್ಲದ ಪಶುಪ್ರಾಯರು ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಪೊಳ್ಳು, ಶ್ವಾಸವಿಲ್ಲದವುಗಳು, ಅವನು ಎರಕಹೊಯ್ದ ಪುತ್ತಳಿಗಳು.</verse>
				<verse number="18">ಅವು ವ್ಯರ್ಥವಾದವುಗಳು, ಹಾಸ್ಯಾಸ್ಪದ ಕೃತಿಗಳು, ದಂಡನೆಯ ಕಾಲದಲ್ಲಿ ಅಳಿದುಹೋಗುವಂಥವುಗಳು.</verse>
				<verse number="19">ಯಕೋಬ್ಯರಿಗೆ ಸ್ವಂತವಾದ ದೇವರು ಅವುಗಳ ಹಾಗಲ್ಲ ಆತ ಸಮಸ್ತವನ್ನು ಸೃಷ್ಟಿಸಿದಾತ ಆತನ ಸೊತ್ತು ಇಸ್ರಯೇಲ್ ವಂಶ ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ಆತನ ನಾಮಧೇಯ.</verse>
				<verse number="20">“ಬಾಬಿಲೋನೇ, ನೀನು ನನಗೊಂದು ಯುದ್ಧಾಸ್ತ್ರ, ಒಂದು ಗದೆ. ಈ ಗದೆಯಿಂದ ರಾಷ್ಟ್ರಗಳನ್ನು ಬಡಿದುಬಿಡುವೆನು, ರಾಜ್ಯಗಳನ್ನು ಅಳಿಸಿಬಿಡುವೆನು.</verse>
				<verse number="21">ಈ ಗದೆಯಿಂದ ಒಡೆದುಬಿಡುವೆನು ಕುದುರೆಯನ್ನೂ ಸವಾರನನ್ನೂ,</verse>
				<verse number="22">ರಥವನ್ನೂ ಸಾರಥಿಯನ್ನೂ ಸ್ತ್ರೀಪುರುಷರನ್ನೂ ಬಾಲವೃದ್ಧರನ್ನೂ.</verse>
				<verse number="23">ಈ ಗದೆಯಿಂದ ಒಡೆದುಬಿಡುವೆನು ಕುರುಬನನ್ನೂ ಮಂದೆಯನ್ನೂ ರೈತನನ್ನೂ ನೊಗದೆತ್ತುಗಳನ್ನೂ ದೇಶಾಧಿಪತಿಗಳನ್ನೂ ನಾಡಿನೊಡೆಯರನ್ನೂ.”</verse>
				<verse number="24">“ಆದರೆ ಬಾಬಿಲೋನಿನವರು ಹಾಗು ಅದರ ಕಸ್ದೀಯರು ಸಿಯೋನಿನಲ್ಲಿ ಮಾಡಿದ ಎಲ್ಲ ಕೇಡಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೆ ಆ ಸಿಯೋನಿನವರ ಕಣ್ಣೆದುರಿಗೇ ಮುಯ್ಯಿ ತೀರಿಸುವೆನು,” ಎನ್ನುತ್ತಾರೆ ಸರ್ವೇಶ್ವರ.</verse>
				<verse number="25">“ಲೋಕವನ್ನೆಲ್ಲಾ ನಾಶಮಾಡುವ ಎಲೈ ನಾಶಕ ಪರ್ವತವೇ, ನಾನು ನಿನಗೆ ವಿರುದ್ಧನಾಗಿದ್ದೇನೆ. ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಬಂಡೆಯ ಮೇಲಿಂದ ಕೆಳಕ್ಕೆ ಉರುಳಿಸುವೆನು. ಸುಟ್ಟ ಬೆಟ್ಟವನ್ನಾಗಿಸುವೆನು.</verse>
				<verse number="26">ಮೂಲೆಗಲ್ಲಿಗಾಗಲಿ, ಅಸ್ತಿವಾರದ ಕಲ್ಲಿಗಾಗಲಿ ಯಾರೂ ನಿನ್ನಿಂದ ಕಲ್ಲನ್ನು ತೆಗೆಯರು. ನೀನು ನಿತ್ಯನಾಶಕ್ಕೆ ಗುರಿಯಾಗುವೆ,” ಎನ್ನುತ್ತಾರೆ ಸರ್ವೇಶ್ವರ.</verse>
				<verse number="27">“ನಾಡಿನಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲ ಕೊಂಬೂದಿರಿ, ರಾಷ್ಟ್ರಗಳನ್ನು ಸಜ್ಜುಮಾಡಿರಿ. ಬಾಬಿಲೋನಿನ ಮೇಲೆ ಬೀಳಲಿಕ್ಕೆ ಅರರಾಟ್, ಮಿನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿ. ಸೋಲಿಸಬಲ್ಲ ಸೇನಾಪತಿಯನ್ನು ನೇಮಿಸಿರಿ. ಬಿರುಸಾದ ಅಶ್ವಬಲವನ್ನು ಮಿಡತೆಗಳ ದಂಡಿನೋಪಾದಿ ಬರಮಾಡಿ.</verse>
				<verse number="28">ರಾಷ್ಟ್ರಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಕೈಕೆಳಗಿರುವ ಎಲ್ಲ ನಾಡಿನವರು, ಇವರೆಲ್ಲರನ್ನು ಬಾಬಿಲೋನಿಗೆ ವಿರುದ್ಧ ಸಜ್ಜುಗೊಳಿಸಿರಿ.</verse>
				<verse number="29">ಪೊಡವಿ ನೊಂದು ನಡುಗುತ್ತಿದೆ! ಏಕೆಂದರೆ ಬಾಬಿಲೋನ್ ದೇಶ ಹಾಳುಬಿದ್ದು ನಿರ್ಜನವಾಗಲಿ ಎಂದು ಸರ್ವೇಶ್ವರ ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪ ಅಚಲವಾಗಿದೆ.</verse>
				<verse number="30">ಬಾಬಿಲೋನಿಯದ ಶೂರರು ಯುದ್ಧಕ್ಕೆ ಹಿಂಜರಿದು ಹೆಂಗಸರಂತೆ, ಹೇಡಿಗಳಂತೆ ತಮ್ಮ ಕೋಟೆಗಳಲ್ಲೆ ನಿಂತಿದ್ದಾರೆ. ಅದರ ಹೆಬ್ಬಾಗಿಲುಗಳು ಮುರಿದುಬಿದ್ದಿವೆ. ಅದರ ಮನೆಗೆ ಬೆಂಕಿಯಿಕ್ಕಲಾಗಿದೆ.</verse>
				<verse number="31">ಒಬ್ಬ ಸುದ್ದಿಗಾರ ಇನ್ನೊಬ್ಬ ಸುದ್ದಿಗಾರನತ್ತ ಓಡುತ್ತಾನೆ. ಒಬ್ಬ ದೂತ ಇನ್ನೊಬ್ಬ ದೂತನತ್ತ ದೌಡಾಯಿಸುತ್ತಾನೆ. ‘ರಾಜಧಾನಿಯನ್ನು ಎಲ್ಲಾ ಕಡೆಯಿಂದಲೂ ಆಕ್ರಮಿಸಿದ್ದಾರೆ.</verse>
				<verse number="32">ರೇವುಗಳನ್ನು ಹಿಡಿದಿದ್ದಾರೆ. ಹುಲ್ಲಿಗೆ ಬೆಂಕಿ ಹಚ್ಚಿದ್ದಾರೆ. ರಣವೀರರು ಭಯಭ್ರಾಂತರಾಗಿದ್ದಾರೆ’ ಎಂದು ಬಾಬಿಲೋನಿನ ಅರಸನಿಗೆ ತಿಳಿಸುತ್ತಾರೆ.</verse>
				<verse number="33">ಬಾಬಿಲೋನ್ ನಗರವು ತುಳಿದು ತುಳಿದು ಸರಿಮಾಡಿದ ಕಣದಂತಿದೆ. ಇಷ್ಟರಲ್ಲೆ ಕೊಯ್ಲುಕಾಲ ಅದಕ್ಕೆ ಸಂಭವಿಸಲಿದೆ; ಇದು ಇಸ್ರಯೇಲರ ದೇವರೂ ಸೇನಾಧೀಶ್ವರನೂ ಆದ ಸರ್ವೇಶ್ವರನ ನುಡಿ.”</verse>
				<verse number="34">ಬಾಬಿಲೋನಿಯದ ಅರಸ ನೆಬೂಕದ್ನೆಚ್ಚರನು ನನ್ನನ್ನು ಮುರಿದು ತಿಂದುಬಿಟ್ಟ ನನ್ನನ್ನು ಕುಡಿದು ಬಿಸಾಡಿದ ಪಾತ್ರೆಯನ್ನಾಗಿಸಿಬಿಟ್ಟ. ಘಟಸರ್ಪದ ಹಾಗೆ ನನ್ನನ್ನು ನುಂಗಿದ ನನ್ನ ರುಚಿಪದಾರ್ಥಗಳಿಂದ ಹೊಟ್ಟೆ ತುಂಬಿಸಿಕೊಂಡ ಮಿಕ್ಕಿದುದನ್ನೆಲ್ಲ ತೊಳೆದು ಎಸೆದುಬಿಟ್ಟ.</verse>
				<verse number="35">‘ನಮ್ಮ ಪ್ರಾಣವನ್ನು ಹಿಂಡಿದ ದೋಷ ಬಾಬಿಲೋನಿಗೆ ತಟ್ಟಲಿ’ ಎನ್ನುತ್ತದೆ ಸಿಯೋನ್. ‘ನಮ್ಮ ರಕ್ತವನ್ನು ಸುರಿಸಿದ ಅಪರಾಧ ಅದರ ಕಸ್ದೀಯರಿಗೆ ಬಡಿಯಲಿ!’ ಎನ್ನುತ್ತದೆ ಜೆರುಸಲೇಮ್.</verse>
				<verse number="36">ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ, ನಾನು ನಿನ್ನ ಪರವಾಗಿ ವ್ಯಾಜ್ಯಮಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು. ಅದರ ಸರೋವರ ಬತ್ತಿಹೋಗುವಂತೆಯೂ ಅದರ ಪ್ರವಾಹ ಒಣಗಿಹೋಗುವಂತೆಯೂ ಮಾಡುವೆನು.</verse>
				<verse number="37">ಆಗ ಬಾಬಿಲೋನ್ ಹಾಳುದಿಬ್ಬ ಆಗುವುದು. ಗುಳ್ಳೆನರಿಗಳ ಬೀಡಾಗುವುದು. ಅದು ಭಯಭೀತಿಗೂ ಸೀಳು ಪರಿಹಾಸ್ಯಕ್ಕೂ ಆಸ್ಪದವಾಗುವುದು.</verse>
				<verse number="38">ಬಾಬಿಲೋನಿನವರು ಯುವಸಿಂಹಗಳಂತೆ ಒಟ್ಟಿಗೆ ಗರ್ಜಿಸುವರು, ಸಿಂಹದ ಮರಿಗಳಂತೆ ಗುರುಗುಟ್ಟುವರು.</verse>
				<verse number="39">ಅವರು ಹೊಟ್ಟೆಬಾಕರೇ ಸರಿ. ಅವರಿಗೆ ಔತಣವನ್ನು ಸಿದ್ಧಮಾಡುವೆನು. ತಿಂದು ಸಂಭ್ರಮಪಡುವಂತೆ ಮಾಡುವೆನು. ತಲೆಗೇರುವತನಕ ಕುಡಿಸಿ ಎಂದಿಗೂ ಎಚ್ಚರಗೊಳ್ಳದೆ ಚಿರನಿದ್ರೆಯಲ್ಲಿರುವಂತೆ ಮಾಡುವೆನು.</verse>
				<verse number="40">ಕುರಿ, ಟಗರು, ಹೋತಗಳ ಹಾಗೆ ಅವರನ್ನು ವಧ್ಯಸ್ಥಾನಕ್ಕೆ ಬರಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="41">ಏನು, ಶೇಷಕ್ ಶತ್ರುವಶವಾಯಿತೆ? ಲೋಕಪ್ರಸಿದ್ಧ ನಗರ ಶರಣಾಗತವಾಯಿತೆ?</verse>
				<verse number="42">ರಾಷ್ಟ್ರಗಳ ಕಣ್ಣಿಗೆ ಬಾಬಿಲೋನ್ ಭೀಕರವಾಗಿಬಿಟ್ಟಿದೆ, ಸಮುದ್ರವೆ ಬಾಬಿಲೋನಿಯದ ಮೇಲೆ ನುಗ್ಗಿಬಿಟ್ಟಿದೆ, ಲೆಕ್ಕವಿಲ್ಲದ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ.</verse>
				<verse number="43">ಕಾಡು, ಕಗ್ಗಾಡು, ಬೆಂಗಾಡು ಆಗಿವೆ ಅದರ ನಗರಗಳು. ಆ ದೇಶದೊಳು ಯಾರೂ ವಾಸಿಸರು, ಯಾವ ನರಪ್ರಾಣಿಯೂ ಹಾದುಹೋಗದು.</verse>
				<verse number="44">“ಬಾಬಿಲೋನಿಯದ ಬೇಲ್‍ದೇವತೆಯನ್ನು ದಂಡಿಸುವೆನು. ಅದು ನುಂಗಿದ್ದನ್ನು ಅದರ ಬಾಯಿಂದಲೇ ಕಕ್ಕಿಸುವೆನು. ಪ್ರವಾಹವಾಗಿ ಅಲ್ಲಿಗೆ ಬರುತ್ತಿದ್ದ ಸಕಲ ದೇಶೀಯರು ಇನ್ನು ಬಾರರು. ಆ ಬಾಬಿಲೋನಿನ ಪೌಳಿಗೋಡೆ ಇನ್ನು ಬಿದ್ದುಹೋಗುವುದು.</verse>
				<verse number="45">ನನ್ನ ಜನರೇ, ಬಾಬಿಲೋನನ್ನು ಬಿಟ್ಟು ಹೊರಡಿ. ನನ್ನ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಿ.</verse>
				<verse number="46">ನಿಮ್ಮ ಎದೆ ಕುಂದದಿರಲಿ. ನಾಡಿನಲ್ಲಿ ಕಿವಿಗೆ ಬೀಳುವ ಸುದ್ದಿ ನಿಮ್ಮನ್ನು ಹೆದರಿಸದಿರಲಿ. ಒಂದು ವರ್ಷ ಒಂದು ಸುದ್ದಿಯಾದರೆ ಮತ್ತೊಂದು ವರ್ಷ ಮತ್ತೊಂದು ಸುದ್ದಿ. ಹಿಂಸಾಚಾರ ಪ್ರಬಲವಾಗುತ್ತಿದೆ ನಾಡಿನಲ್ಲಿ. ಅಧಿಕಾರಿಗೆ ಅಧಿಕಾರಿಯೇ ವಿರೋಧಿ ಅಲ್ಲಿ.</verse>
				<verse number="47">ಇಗೋ ಬಾಬಿಲೋನಿಯದ ವಿಗ್ರಹಗಳನ್ನು ದಂಡಿಸುವ ದಿನಗಳು ಬರಲಿವೆ. ಆ ನಾಡೆಲ್ಲ ನಾಚಿಕೆಗೆ ಈಡಾಗುವುದು. ಅದರ ಪ್ರಜೆಗಳು ಅದರಲ್ಲೇ ಹತರಾಗಿ ಬೀಳುವರು.</verse>
				<verse number="48">ಆಗ ಭೂಮಿ ಆಕಾಶಗಳೂ ಅಲ್ಲಿನ ಸಮಸ್ತವೂ ಬಾಬಿಲೋನಿನ ನಾಶ ನೋಡಿ ಜಯಘೋಷಮಾಡುವುವು. ಹಾಳುಮಾಡುವರು, ಉತ್ತರದಿಂದ ಬಂದು ಹಾಳುಮಾಡುವರು.</verse>
				<verse number="49">ಹತರಾದ ಇಸ್ರಯೇಲರೇ, ಬಾಬಿಲೋನಿಯದ ಹಿತಕ್ಕಾಗಿ ಬಹುಜನ ಹತರಾದರು. ಅಂತೆಯೇ ಬಾಬಿಲೋನ್ ಹತವಾಗುವುದು. ಸರ್ವೇಶ್ವರನಾದ ನನ್ನ ನುಡಿ ಇದು.”</verse>
				<verse number="50">“ಕತ್ತಿಯಿಂದ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ. ದೂರವಿರುವಾಗಲು ಸರ್ವೇಶ್ವರನನ್ನು ಸ್ಮರಿಸಿರಿ. ಜೆರುಸಲೇಮನ್ನು ಕುರಿತು ಮನಸ್ಸಾರೆ ಹಂಬಲಿಸಿರಿ.</verse>
				<verse number="51">‘ನಿಂದೆಯನ್ನು ಕೇಳಿ ನಾವು ಲಜ್ಜೆಗೊಂಡೆವು, ಮ್ಲೇಚ್ಛರು ಸರ್ವೇಶ್ವರನ ಪವಿತ್ರಾಲಯವನ್ನು ಪ್ರವೇಶಿಸಿದ್ದರಿಂದ ಅವಮಾನವು ನಮ್ಮ ಮುಖವನ್ನು ಆವರಿಸಿದೆ,’ ಎನ್ನುತ್ತೀರೋ?</verse>
				<verse number="52">ಸರ್ವೇಶ್ವರನಾದ ನಾನು ಹೇಳುವುದನ್ನು ಕೇಳಿ: “ಬರಲಿವೆ ಬಾಬಿಲೋನಿನ ವಿಗ್ರಹಗಳನ್ನು ದಂಡಿಸುವ ದಿನಗಳು. ಆಗ ಆ ದೇಶದೊಳೆಲ್ಲ ನರಳಾಡುವರು ಗಾಯಗೊಂಡವರು.</verse>
				<verse number="53">ಬಾಬಿಲೋನ್ ಆಕಾಶದ ತನಕ ಬೆಳೆದರೂ ಎತ್ತರವಾದ, ಬಲವಾದ ಕೋಟೆಕಟ್ಟಿ ಭದ್ರಪಡಿಸಿಕೊಂಡರೂ ನನ್ನ ಅಪ್ಪಣೆಯ ಮೇರೆಗೆ ಜನರು ಹಾಳುಮಾಡುವರು; ಅದರ ಮೇಲೆ ಬೀಳುವರು. ಸರ್ವೇಶ್ವರನಾದ ನನ್ನ ನುಡಿ ಇದು.”</verse>
				<verse number="54">“ಇಗೋ ಕೇಳಿಬರುತ್ತಿದೆ ಬಾಬಿಲೋನಿನಿಂದ ಕೂಗಾಟ! ಆ ಬಾಬಿಲೋನಿಯರ ದೇಶದಿಂದ ಮಹಾ ವಿನಾಶದ ಕಿರುಚಾಟ!</verse>
				<verse number="55">ಬಾಬಿಲೋನನ್ನು ನಾನು ಹಾಳುಮಾಡಿಬಿಡುತ್ತೇನೆ ಅದರ ಸದ್ದುಗದ್ದಲವನ್ನು ಅಡಗಿಸಿಬಿಡುತ್ತೇನೆ. ಮಹಾ ಜಲಪ್ರವಾಹಗಳು ಭೋರ್ಗರೆಯುವಂತೆ ಅಲೆ ಅಲೆಯಾಗಿ ಬಂದ ಶತ್ರುಗಳು ಘೋಷಿಸಿ ಆರ್ಭಟಿಸುತ್ತಿದ್ದಾರೆ.</verse>
				<verse number="56">ವಿನಾಶಕಾರನು ಬಂದೆರಗಿದ್ದಾನೆ ಬಾಬಿಲೋನಿನ ಮೇಲೆ ಅದರ ಶೂರರೋ ಸೆರೆಯಾಗಿಬಿಟ್ಟಿದ್ದಾರೆ ಅವರ ಬಿಲ್ಲುಗಳೋ ಮುರಿದುಹೋಗಿವೆ. ಸರ್ವೇಶ್ವರನು ಮುಯ್ಯಿತೀರಿಸುವ ದೇವರು ಆತ ಪ್ರತಿಕ್ರಿಯೆ ವ್ಯಕ್ತಪಡಿಸದೆ ಇರನು.</verse>
				<verse number="57">ಬಾಬಿಲೋನಿನ ರಾಜ್ಯಪಾಲರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಯೋಧರು, ಇವರೆಲ್ಲರಿಗೆ ತಲೆಗೇರುವ ತನಕ ಕುಡಿಸುವೆನು. ಅವರು ಎಂದೆಂದಿಗೂ ಎಚ್ಚರಗೊಳ್ಳದೆ ಚಿರನಿದ್ರೆ ಮಾಡುವರು ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರನೆಂಬ ರಾಜಾಧಿರಾಜರು.”</verse>
				<verse number="58">ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: ಬಾಬಿಲೋನಿನ ದೊಡ್ಡ ಪೌಳಿಗೋಡೆ ಪೂರ್ಣವಾಗಿ ನೆಲಸಮವಾಗುವುದು. ಅದರ ಉನ್ನತ ದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವುವು ರಾಷ್ಟ್ರಗಳು ದುಡಿದದ್ದು ಬೆಂಕಿಗೆ ತುತ್ತಾಗುವುದು.”</verse>
				<verse number="59">ಮಸ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಚಿದ್ಕೀಯನೊಡನೆ ಬಾಬಿಲೋನಿಗೆ ಪ್ರಯಾಣಮಾಡಿದನು. ಆಗ ಪ್ರವಾದಿ ಯೆರೆಮೀಯನು ಸೆರಾಯನಿಗೆ ಒಂದು ಅಪ್ಪಣೆಯನ್ನು ಕೊಟ್ಟನು.</verse>
				<verse number="60">ಸೆರಾಯನು ಸರಬರಾಯಿನ ಕಾರಬಾರಿ. ಯೆರೆಮೀಯನು ಬಾಬಿಲೋನಿಗೆ ಸಂಭವಿಸತಕ್ಕ ಎಲ್ಲ ಕೇಡಿನ ವಿಷಯವನ್ನು, ಅಂದರೆ ಬಾಬಿಲೋನಿನ ಸಂಬಂಧವಾಗಿ ಹಿಂದೆ ಲಿಖಿತವಾದ ಎಲ್ಲ ಸಂಗತಿಗಳನ್ನು, ಒಂದು ಗ್ರಂಥವಾಗಿ ಬರೆದು ಸೆರಾಯನಿಗೆ ಹೀಗೆಂದು ಹೇಳಿದನು:</verse>
				<verse number="61">“ನೋಡು, ನೀನು ಬಾಬಿಲೋನನ್ನು ತಲುಪಿದ ಮೇಲೆ ಈ ಮಾತುಗಳನ್ನೆಲ್ಲ ತಕ್ಕವರಿಗೆ ಓದಿ ಹೇಳು.</verse>
				<verse number="62">ಬಳಿಕ, ‘ಸರ್ವೇಶ್ವರಾ, ನೀವು ಈ ಸ್ಥಳವನ್ನು ನಿರ್ಮೂಲಮಾಡಲು ಉದ್ದೇಶಿಸಿ, ಇದು ಜನರಿಗೂ ಜಾನುವಾರುಗಳಿಗೂ ನೆಲೆಯಾಗದೆ ಸದಾಕಾಲ ಹಾಳಾಗಿಯೇ ಉಳಿಯಲಿ ಎಂದು ನುಡಿದಿದ್ದೀರಲ್ಲಾ!’ ಎಂದು ಅರಿಕೆಮಾಡು.</verse>
				<verse number="63">ಈ ಸುರುಳಿಯನ್ನು ಓದಿ ಮುಗಿಸಿದ ಮೇಲೆ ಇದಕ್ಕೆ ಕಲ್ಲುಕಟ್ಟಿ ಯೂಫ್ರೆಟಿಸ್ ನದಿಯ ಮಧ್ಯೆ ಎಸೆದುಬಿಡು.</verse>
				<verse number="64">ಆಮೇಲೆ, ‘ಸರ್ವೇಶ್ವರ ಸ್ವಾಮಿ ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಈ ನಗರ ಹೀಗೆಯೇ ಮುಳುಗುವುದು, ಮತ್ತೆ ಏಳದು,’ ಎಂದು ಹೇಳು.” ಇಲ್ಲಿಗೆ ಯೆರೆಮೀಯನ ಪ್ರವಾದನೆ ಮುಗಿಯಿತು.</verse>
			</chapter>
			<chapter number="52">
				<verse number="1">ಚಿದ್ಕೀಯನು ಅರಸನಾದಾಗ ಅವನಿಗೆ ಇಪ್ಪತ್ತೊಂದು ವರ್ಷ. ಅವನು ಜೆರುಸಲೇಮನ್ನು ಹನ್ನೊಂದು ವರ್ಷ ಆಳಿದ. ಅವನ ತಾಯಿ ಲಿಬ್ನದ ಯೆರೆಮೀಯನ ಮಗಳಾದ ಹಮೂಟಲ್ ಎಂಬಾಕೆ.</verse>
				<verse number="2">ಚಿದ್ಕೀಯನು ಯೆಹೋಯಾಕೀಮನಂತೆ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದ.</verse>
				<verse number="3">ಸರ್ವೇಶ್ವರ ಸ್ವಾಮಿ ಬಹಳ ಕೋಪಗೊಂಡು ಜೆರುಸಲೇಮಿನವರ ಮೇಲೂ ಬೇರೆ ಎಲ್ಲ ಯೆಹೂದ್ಯರ ಮೇಲೂ ಇದನ್ನೆಲ್ಲ ಬರಮಾಡಿ, ಕಡೆಗೆ ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಚಿದ್ಕೀಯನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ವಿರುದ್ಧ ತಿರುಗಿಬಿದ್ದ.</verse>
				<verse number="4">ಅವನು ಚಿದ್ಕೀಯನ ಆಳ್ವಿಕೆಯ ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನ ಸರ್ವಸೈನ್ಯ ಸಮೇತ ಜೆರುಸಲೇಮಿಗೆ ಬಂದ. ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಎಬ್ಬಿಸಿದ.</verse>
				<verse number="5">ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದಲ್ಲಿ ಅದಕ್ಕೆ ಮುತ್ತಿಗೆ ಹಾಕಿದ.</verse>
				<verse number="6">ಘೋರಕ್ಷಾಮದ ಕಾರಣ ನಗರದವರಿಗೆ ಆಹಾರ ಸಿಕ್ಕದೆ ಹೋಯಿತು. ನಗರಕ್ಕೆ ಮುತ್ತಿಗೆ ಹಾಕಿದ್ದ ಬಾಬಿಲೋನಿಯರು ಹನ್ನೊಂದನೆಯ ತಿಂಗಳಿನ ಒಂಬತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದರು.</verse>
				<verse number="7">ಒಳಗಿದ್ದ ಎಲ್ಲ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಿದ್ದ ಬಾಗಿಲಿನ ಮೂಲಕ ನಗರದಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯೆಯಿತ್ತು. ಅವರು ಅರಾಬಾ ಎಂಬ ಕಣಿವೆ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.</verse>
				<verse number="8">ಬಾಬಿಲೋನಿಯದ ಸೈನಿಕರು ಅರಸ ಚಿದ್ಕೀಯನನ್ನು ಹಿಂದಟ್ಟಿ ಜೆರಿಕೋವಿನ ಬಯಲಿನಲ್ಲಿ ಹಿಡಿದರು. ಅಷ್ಟರಲ್ಲಿ ಅವನ ಸೈನಿಕರೆಲ್ಲ ಅವನನ್ನು ಬಿಟ್ಟು ಚದರಿಹೋಗಿದ್ದರು.</verse>
				<verse number="9">ಅನಂತರ ಬಾಬಿಲೋನಿಯರು ಅವನನ್ನು ತಮ್ಮ ಅರಸ ನೆಬೂಕದ್ನೆಚ್ಚರನ ಬಳಿಗೆ ಎಳೆದುತಂದರು.</verse>
				<verse number="10">ಆ ಅರಸನು ಚಿದ್ಕೀಯನಿಗೆ ಶಿಕ್ಷೆ ವಿಧಿಸಿ ಅವನ ಮಕ್ಕಳನ್ನು ಅವನ ಕಣ್ಣೆದುರಿಗೆ ವಧಿಸಿದ. ಜುದೇಯದ ಎಲ್ಲ ಪದಾಧಿಕಾರಿಗಳನ್ನು ರಿಬ್ಲದಲ್ಲಿ ಕೊಲ್ಲಿಸಿದ.</verse>
				<verse number="11">ಇದಲ್ಲದೆ ಬಾಬಿಲೋನಿಯದ ಆ ಅರಸನು ಚಿದ್ಕೀಯನ ಎರಡು ಕಣ್ಣುಗಳನ್ನು ಕಿತ್ತು ಅವನಿಗೆ ಬೇಡಿ ಹಾಕಿ ಬಾಬಿಲೋನಿಗೆ ತೆಗೆದುಕೊಂಡು ಹೋಗಿ ಜೀವನಾವಧಿಯವರೆಗೆ ಅವನನ್ನು ಸೆರೆಯಲ್ಲಿಟ್ಟ.</verse>
				<verse number="12">ಐದನೆಯ ತಿಂಗಳಿನ ಹತ್ತನೆಯ ದಿನ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ, ಬಾಬಿಲೋನಿನ ಅರಸನ ಸೇವಕನೂ ರಕ್ಷಾದಳದ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬುವನು ಜೆರುಸಲೇಮಿಗೆ ಬಂದನು.</verse>
				<verse number="13">ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.</verse>
				<verse number="14">ಅವನ ಜೊತೆಯಲ್ಲಿ ಬಂದಿದ್ದ ಬಾಬಿಲೋನಿಯದ ಸೈನ್ಯದವರು ಜೆರುಸಲೇಮಿನ ಸುತ್ತ ಗೋಡೆಗಳನ್ನೆಲ್ಲ ಕೆಡವಿದರು.</verse>
				<verse number="15">ರಕ್ಷಾದಳದ ಅಧಿಪತಿಯಾದ ನೆಬೂಜರದಾನನು ಅನೇಕ ದಟ್ಟ ದರಿದ್ರರನ್ನೂ ನಗರದಲ್ಲೆ ಉಳಿದವರನ್ನೂ ಮೊದಲೇ ಬಾಬಿಲೋನಿನ ಅರಸನಿಗೆ ಮೊರೆಹೊಕ್ಕವರನ್ನೂ ಹಾಗು ಬೇರೆ ಜನರೆಲ್ಲರನ್ನು ಸೆರೆಗೆ ಒಯ್ದನು.</verse>
				<verse number="16">ಹೊಲಗಳನ್ನು ಮತ್ತು ದ್ರಾಕ್ಷಿಯ ತೋಟಗಳನ್ನು ವ್ಯವಸಾಯ ಮಾಡುವುದಕ್ಕಾಗಿ ನಾಡಿನ ಜನರಲ್ಲಿ ಕೇವಲ ದರಿದ್ರರನ್ನು ಮಾತ್ರ ಬಿಟ್ಟುಹೋದರು.</verse>
				<verse number="17">ಬಾಬಿಲೋನಿಯರು ಸರ್ವೇಶ್ವರನ ಆಲಯದಲ್ಲಿದ್ದ ಕಂಚಿನ ಕಂಬಗಳನ್ನೂ ಚಕ್ರದ ಬಂಡಿಗಳನ್ನೂ ಕಂಚಿನ ಕಡಲೆಂಬ ಪಾತ್ರೆಯನ್ನೂ ಒಡೆದು ಅವುಗಳ ಕಂಚನ್ನೆಲ್ಲ ಕೊಂಡೊಯ್ದರು.</verse>
				<verse number="18">ಅದು ಮಾತ್ರವಲ್ಲ, ಸರ್ವೇಶ್ವರನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಸಾಂಬ್ರಾಣಿಕಳಸ ಮುಂತಾದ ಕಂಚಿನ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.</verse>
				<verse number="19">ರಕ್ಷಾದಳದ ನಾಯಕನು ಬೆಳ್ಳಿ ಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಸಾಂಬ್ರಾಣಿಕಳಸ, ಪಾನಾರ್ಪಣೆಯ ಪಾತ್ರೆ ಮೊದಲಾದವುಗಳನ್ನು ದೋಚಿಕೊಂಡನು.</verse>
				<verse number="20">ಅರಸ ಸೊಲೊಮೋನನು ಸರ್ವೇಶ್ವರನಾಲಯಕ್ಕಾಗಿ ಮಾಡಿಸಿದ ಎರಡು ಕಂಬಗಳು, ಕಂಚಿನ ಕಡಲೆಂಬ ಪಾತ್ರೆ, ಪೀಠಗಳನ್ನು ಹೊರುವ ಹನ್ನೆರಡು ಕಂಚಿನ ಹೋರಿಗಳು, ಇವುಗಳನ್ನು ಮಾಡುವುದಕ್ಕೆ ಎಷ್ಟೋ ಕಂಚು ಹಿಡಿದಿತ್ತು.</verse>
				<verse number="21">ಕಂಬಗಳಲ್ಲಿ ಮೊದಲನೆಯ ಕಂಬ ಎಂಟು ಮೀಟರ್ ಎತ್ತರವಿತ್ತು. ಅದರ ಸುತ್ತಳತೆ 5:3 ಮೀಟರ್. ಅದರ ಒಳಭಾಗ ಹೊಳ್ಳಾಗಿತ್ತು. ಆ ಲೋಹ ನಾಲ್ಕು ಬೆರಳು ದಪ್ಪವಾಗಿತ್ತು.</verse>
				<verse number="22">ಕಂಬದ ಮೇಲೆ 2:2 ಮೀಟರ್ ಎತ್ತರವಾದ ಒಂದು ಕಂಚಿನ ಕುಂಭವಿತ್ತು. ಆ ಕುಂಭದ ಮೇಲೆ ಸುತ್ತಲೂ ಕಂಚಿನ ಜಾಲರಿ ಹಾಗೂ ದಾಳಿಂಬೆ ಹಣ್ಣುಗಳು ಇದ್ದವು. ಎರಡನೆಯ ಕಂಬವು ದಾಳಿಂಬೆ ಹಣ್ಣುಗಳಿಂದ ಹಾಗೆಯೆ ಅಲಂಕಾರವಾಗಿತ್ತು.</verse>
				<verse number="23">ನಾಲ್ಕು ಪಕ್ಕಗಳಲ್ಲಿ ತೊಂಬತ್ತಾರು ದಾಳಿಂಬೆ ಹಣ್ಣುಗಳಿದ್ದವು. ಜಾಲರಿಯ ಮೇಲೆ ಸುತ್ತಲೂ ಒಟ್ಟಿಗೆ ನೂರು ದಾಳಿಂಬೆ ಹಣ್ಣುಗಳಿದ್ದವು</verse>
				<verse number="24">ರಕ್ಷಾದಳದ ನಾಯಕ ನೆಬೂಜರದಾನನು ಹಿಡಿದುಕೊಂಡು ಹೋದ ಜನರಲ್ಲಿ ಮಹಾಯಾಜಕ ಸೆರಾಯನು, ಎರಡನೇ ದರ್ಜೆಯ ಯಾಜಕ ಜೆಫನ್ಯನು, ಮೂರು ಮಂದಿ ದ್ವಾರಪಾಲಕರು ಸೇರಿದ್ದರು.</verse>
				<verse number="25">ಅವನು ನಗರದಿಂದ ಸೈನ್ಯಸಂಬಂಧವಾದ ಎಲ್ಲ ವ್ಯವಸ್ಥೆಯನ್ನೂ ಮಾಡುವ ಕಂಚುಕಿಯನ್ನು, ಅರಸನಿಗೆ ಆಪ್ತರಾಗಿದ್ದ ಏಳು ಮಂದಿ ಮಂತ್ರಿಗಳನ್ನು, ಯುದ್ಧಕ್ಕೆ ಹೋಗತಕ್ಕವರ ಪಟ್ಟಿಮಾಡುವ ಸೇನಾಪತಿಯ ಲೇಖಕನನ್ನು ಹಾಗು ನಗರದಲ್ಲಿದ್ದ ಅರವತ್ತು ಮಂದಿ ರೈತರನ್ನು ಹಿಡಿದುಕೊಂಡುಹೋದನು.</verse>
				<verse number="26">ನೆಬೂಜರದಾನನು ಇವರನ್ನೆಲ್ಲ ಹಿಡಿದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು.</verse>
				<verse number="27">ಅರಸನು ಅವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯಾಳುಗಳಾಗಿ ತಮ್ಮ ನಾಡನ್ನೆ ಬಿಟ್ಟುಹೋಗಬೇಕಾಯಿತು.</verse>
				<verse number="28">ನೆಬೂಕದ್ನೆಚ್ಚರನು ಸೆರೆಗೆ ಒಯ್ದವರ ಲೆಕ್ಕದ ಪಟ್ಟಿ ಹೀಗಿದೆ; ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಸೆರೆಗೊಯ್ದದ್ದು 3,023 ಮಂದಿ ಯೆಹೂದ್ಯರನ್ನು,</verse>
				<verse number="29">ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ 832 ಮಂದಿಯನ್ನು ಜೆರುಸಲೇಮಿನಿಂದ ಸೆರೆಗೊಯ್ದನು.</verse>
				<verse number="30">ಆಳ್ವಿಕೆಯ ಇಪ್ಪತ್ತು ಮೂರನೆಯ ವರ್ಷದಲ್ಲಿ ರಕ್ಷಾದಳದ ನಾಯಕ ನೆಬೂಜರದಾನನು 745 ಮಂದಿ ಯೆಹೂದ್ಯರನ್ನು ಸೆರೆಗೊಯ್ದನು. ಹೀಗೆ ಸೆರೆಯಾದವರ ಮೊತ್ತ 4,600 ಮಂದಿ.</verse>
				<verse number="31">ಎವೀಲ್ಮೆರೋದಕನು ಪಟ್ಟಕ್ಕೆ ಬಂದ ಮೊದಲನೆಯ ವರ್ಷದಲ್ಲಿ, ಅಂದರೆ ಜುದೇಯದ ಅರಸ ಯೆಹೋಯಾಕೀಮನು ಸೆರೆಗೆ ಸಿಕ್ಕಿದ ಮೂವತ್ತೇಳನೆಯ ವರ್ಷದ ಹನ್ನೆರಡನೆಯ ತಿಂಗಳಿನ ಇಪ್ಪತ್ತೈದನೆಯ ದಿನದಲ್ಲಿ, ಯೆಹೋಯಾಕೀಮನನ್ನು ಕ್ಷಮಿಸಿ ಸೆರೆಯಿಂದ ಬಿಡುಗಡೆಮಾಡಿದನು.</verse>
				<verse number="32">ಅದು ಮಾತ್ರವಲ್ಲ, ಅವನೊಡನೆ ಪ್ರೀತಿಯಿಂದ ಮಾತಾಡಿ, ಅವನ ಸಂಗಡ ಬಾಬಿಲೋನಿನಲ್ಲಿದ್ದ ಎಲ್ಲ ಅರಸುಗಳಲ್ಲಿ ಅವನಿಗೆ ಉನ್ನತಸ್ಥಾನವನ್ನು ಕೊಟ್ಟನು.</verse>
				<verse number="33">ಯೆಹೋಯಾಕೀಮನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದ ಇರುವವರೆಗೂ ಅರಸನ ಪಂಕ್ತಿಯಲ್ಲೇ ಊಟಮಾಡುತ್ತಿದ್ದನು.</verse>
				<verse number="34">ಅವನ ಜೀವಿತಕಾಲವೆಲ್ಲ, ಸಾಯುವ ತನಕ ಅವನಿಗೆ ಬೇಕಾಗಿದ್ದ ಎಲ್ಲ ಪದಾರ್ಥಗಳು ಬಾಬಿಲೋನಿನ ಅರಸನಿಂದಲೇ ಪ್ರತಿನಿತ್ಯವೂ ದೊರಕುತ್ತಿದ್ದವು.</verse>
			</chapter>
		</book>
		<book number="25">
			<chapter number="1">
				<verse number="1">ಅಯ್ಯೋ, ಅಂದು ಜನಭರಿತವಾಗಿದ್ದ ನಗರಿ ಇಂದು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ! ರಾಷ್ಟ್ರಗಳಲ್ಲೆಲ್ಲಾ ಅತಿ ಶ್ರೇಷ್ಠಳಾಗಿದ್ದವಳು ವಿಧವೆ ಆಗಿಬಿಟ್ಟಳಲ್ಲಾ! ಪ್ರಾಂತ್ಯಗಳಲ್ಲೆಲ್ಲಾ ಬಹಳ ಪ್ರವೀಣಳಾಗಿದ್ದವಳು ದಾಸಿಯಂತೆ ಆಗಿಬಿಟ್ಟಿರುವಳಲ್ಲಾ!</verse>
				<verse number="2">ಇರುಳೆಲ್ಲ ಅತ್ತಳು ಬಿಕ್ಕಿಬಿಕ್ಕಿ ಕೆನ್ನೆ ಮೇಲೆ ನೋಡಿ, ಕಣ್ಣೀರ ಕೋಡಿ! ಆಕೆಯ ಹಲವಾರು ಪ್ರಿಯರಲ್ಲಿ ಸಂತೈಸುವವರೇ ಇಲ್ಲ ಮಿತ್ರರಾಗಿದ್ದವರೇ ದ್ರೋಹವೆಸಗಿ ಶತ್ರುಗಳಾಗಿರುವರಲ್ಲಾ!</verse>
				<verse number="3">ಘೋರಸೇವೆ ಶ್ರಮೆಗಳಿಂದ ತಪ್ಪಿಸಿಕೊಳ್ಳಲಿಕೆ ವಲಸೆಹೋಗಿರುವಳಲ್ಲಾ ‘ಯೆಹೂದಿ’ ಎಂಬಾಕೆ! ಮ್ಲೇಚ್ಛರ ಮಧ್ಯೆ ವಾಸಮಾಡುತ್ತಿರುವಳಲ್ಲಾ ನೆಮ್ಮದಿಯಿಲ್ಲದೆ ಹಿಮ್ಮೆಟ್ಟಿ ಹಿಡಿದರು ಹಿಂಸಕರೆಲ್ಲಾ ಆಕೆ ಇಕ್ಕಟ್ಟಿಗೆ ಸಿಕ್ಕಿರುವಾಗಲೆ!</verse>
				<verse number="4">ಬಿಕೋ ಎನ್ನುತ್ತಿವೆ ಸಿಯೋನಿಗೆ ತೆರಳುವ ಮಾರ್ಗಗಳು ಮಹೋತ್ಸವಕ್ಕೆ ಇನ್ನು ಬರುತ್ತಿಲ್ಲ ಯಾತ್ರಿಕರಾರು ಪಾಳುಬಿದ್ದಿವೆ ಅದರ ಬಾಗಿಲುಗಳು ನಿಟ್ಟುಸಿರಿಡುತ್ತಿರುವರು ಅದರ ಯಾಜಕರು ವ್ಯಥೆಪಡುತ್ತಿರುವರು ಅದರ ಯುವತಿಯರು ನಗರಕ್ಕೆ ನಗರವೇ ದುಃಖದಲ್ಲಿ ಮುಳುಗಿರುವುದು.</verse>
				<verse number="5">ಅದರ ಅಗಣಿತ ದ್ರೋಹಗಳಿಗಾಗಿ ಸರ್ವೇಶ್ವರ ಮಾಡಿದನದನ್ನು ದುಃಖಕ್ಕೆ ಈಡಾಗಿ, ಅದರ ವಿರೋಧಿಯೇ ಅದಕ್ಕೀಗ ಅಧಿಪತಿ! ಅದರ ಶತ್ರುಗಳಿಗೋ ಸುಖಸಮೃದ್ಧಿ! ಅದರ ಹಸುಳೆಗಳೂ ಸೆರೆಹೋಗಿವೆ ವೈರಿಯ ವಶವಾಗಿ!</verse>
				<verse number="6">ಕಳೆದುಹೋಗಿದೆಯಲ್ಲಾ ಸಿಯೋನ್ ನಗರಿಯ ವೈಭವವೆಲ್ಲಾ! ಮೇವಿಲ್ಲದೆ ಬಡಕಲಾದ ಜಿಂಕೆಗಳಂತೆ ಅದರ ನಾಯಕರೆಲ್ಲಾ ಓಡಿಹೋದರು ಬೆಂಗೊಟ್ಟು ಅಟ್ಟಿಬಂದವರಿಗೆಲ್ಲಾ!</verse>
				<verse number="7">ಜೆರುಸಲೇಮ್ ದಿಕ್ಕುಪಾಲಾಗಿ ಕಷ್ಟಪಡುವಾಗ ನೆನಸಿಕೊಳ್ಳುತ್ತಾಳೆ ತನ್ನ ಪ್ರಾಚೀನ ವೈಭವಗಳನ್ನೆಲ್ಲಾ. ತನ್ನ ಜನತೆ ವೈರಿಗಳ ವಶವಾದಾಗ ಆಕೆಗೆ ಸಿಗಲಿಲ್ಲ ಯಾರೊಬ್ಬರ ಬೆಂಬಲ. ಆಕೆಯಾ ಹೀನಸ್ಥಿತಿ ನೋಡಿ ವೈರಿಗಳು ಮಾಡಿದರು ಪರಿಹಾಸ್ಯ.</verse>
				<verse number="8">ಜೆರುಸಲೇಮ್ ಅಶುದ್ಧಳಾದಳು ಪದೇ ಪದೇ ಪಾಪಮಾಡಿ. ಹೊಗಳುತ್ತಿದ್ದವರೇ ತೆಗಳುವವರಾದರು ಆಕೆಯ ನಗ್ನತೆಯನ್ನು ನೋಡಿ. ಆಕೆಯೋ ನಿಟ್ಟುಸಿರಿಡುತ್ತಿರುವಳು ಮುಖವನ್ನು ಮರೆಮಾಡಿ.</verse>
				<verse number="9">ಆಕೆಯ ನೆರಿಗೆಯೂ ಹೊಲಸಾಗಿ ಮುಂದಿನ ಗತಿ ತೋಚದಂತಾಗಿ ಸಂತೈಸುವವರೇ ಇಲ್ಲದವಳಾಗಿ ಬಿದ್ದಿರುವಳಲ್ಲಾ ಈ ಭೀಕರ ಸ್ಥಿತಿಯಲ್ಲಿ! “ಹೇ ಸರ್ವೇಶ್ವರಾ, ನೋಡು ನನ್ನ ಸಂಕಟವನು ಹೆಚ್ಚಳಪಡುತ್ತಿರುವನಲ್ಲಾ ಶತ್ರುವಾದವನು” ಎಂದು ಮೊರೆಯಿಡುತ್ತಾಳೆ ಕೂಗಿ.</verse>
				<verse number="10">ದೋಚಿಕೊಂಡನು ದ್ರೋಹಿ ಆಕೆಯ ಆಸ್ತಿಯನ್ನು ಕೈಚಾಚಿ. 'ಸೇರಿಸಬಾರದು ಸಭೆಗೆ ಮ್ಲೇಚ್ಛರನ್ನು’ ಎಂಬುದು ದೇವನ ಆಣತಿ. ಆದರಿಗೋ ಅಂಥವರೇ ಪವಿತ್ರಾಲಯ ಪ್ರವೇಶಿಸುವ ದುರ್ಗತಿ!</verse>
				<verse number="11">ಅಡ್ಡಾಡುತ್ತಿರುವರು ಆಕೆಯ ಜನರು ಅನ್ನಕ್ಕಾಗಿ ಮಾರುತಿರುವರು ಅಮೂಲ್ಯವಾದುದನ್ನೆ ಆಹಾರಕ್ಕಾಗಿ. “ಸರ್ವೇಶ್ವರಾ, ನೋಡು, ಕಟಾಕ್ಷಿಸು, ನನ್ನ ತುಚ್ಛತೆಯನ್ನು” ಎಂದು ಹೇಳಿ ಆಕೆ ಪ್ರಲಾಪಿಸುತ್ತಿರುವಳು.</verse>
				<verse number="12">ಹಾದುಹೋಗುವವರೇ, ನಿಮಗಿಲ್ಲವೆ ನನ್ನ ಚಿಂತೆ? ಸರ್ವೇಶ್ವರ ಸಿಟ್ಟುಗೊಂಡು ನನಗಿತ್ತಿರುವನು ಈ ವ್ಯಥೆ! ಈ ಪರಿ ಸಂಕಟವನ್ನು ನೀವೆಲ್ಲಾದರು ನೋಡಿದ್ದುಂಟೆ?”</verse>
				<verse number="13">“ಆಕಾಶದಿಂದ ಆತ ಸುರಿಸಿದ್ದಾನೆ ಅಗ್ನಿಯನ್ನೆ ಅದು ದಹಿಸುತ್ತಿದೆ ನನ್ನೊಳಗಿನ ಎಲುಬುಗಳನ್ನೆ ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ ಅದು ನನ್ನನ್ನೆಳೆಯುತ್ತಿದೆ ನೆಲಕ್ಕೆ ಹಾಳುಬಿದ್ದ ನಾನು ಸದಾ ಬಳಲುತ್ತಿದ್ದೇನೆ.”</verse>
				<verse number="14">“ನನ್ನ ದ್ರೋಹಗಳನ್ನು ನನಗೆ ಬಿಗಿದಿದ್ದಾನೆ ನೊಗದ ಕಣ್ಣುಗಳಂತೆ. ಅವು ಹುರಿಗೊಂಡು, ಸುತ್ತಿಕೊಂಡು ಕುತ್ತಿಗೆಗೆ, ನನ್ನ ಶಕ್ತಿಯನ್ನು ಹೀರುತ್ತಿವೆ. ಸಿಕ್ಕಿಸಿದನಲ್ಲಾ ಸ್ವಾಮಿ, ನನ್ನಿಂದ ಎದುರಿಸಲಾಗದಂಥವರ ಕೈಗೆ!</verse>
				<verse number="15">“ಸ್ವಾಮಿ ತೃಣೀಕರಿಸಿದನು ನನ್ನ ಶೂರರನ್ನೆಲ್ಲಾ ನನ್ನ ಕಣ್ಮುಂದೆಯೇ. ಸೈನ್ಯಸಮೂಹವನ್ನೆ ಬರಮಾಡಿದನು ನನ್ನ ಯುವಕರನ್ನು ಸದೆಬಡಿಯಲೆಂದೇ. ಯೆಹೂದಿಯೆಂಬ ಯುವತಿಯನ್ನು ತುಳಿಸಿದನು ತೊಟ್ಟಿಯಲ್ಲಿ ದ್ರಾಕ್ಷಿ ತುಳಿವಂತೆ.</verse>
				<verse number="16">“ಗೋಳಾಡುತ್ತಿರುವೆನು ಈ ವಿಪತ್ತುಗಳಿಂದ; ಸಂತೈಸಿ ಸುಧಾರಿಸುವವನು ಬಲುದೂರವಿರುವುದರಿಂದ ಹರಿಯುತ್ತಿದೆ ಕಂಬನಿ ಧಾರೆಧಾರೆಯಾಗಿ ಕಣ್ಗಳಿಂದ; ವೈರಿಗಳು ಗೆದ್ದು, ನನ್ನ ಕುವರರು ಬಿದ್ದುಹೋಗಿರುವುದರಿಂದ.</verse>
				<verse number="17">ಸಿಯೋನ್ ನಗರಿ ಕೈಚಾಚಿ ಕೂಗಿಕೊಂಡರೂ ಸಂತೈಸುವವರಾರೂ ಇಲ್ಲ. ನೆರೆಹೊರೆಯವರೇ ಆಕೆಯ ವಿರೋಧಿಗಳಾಗಲೆಂದು ಸರ್ವೇಶ್ವರ ತೀರ್ಮಾನಿಸಿದ್ದಾನಲ್ಲಾ! ಅವರ ನಡುವೆ ಹೊಲೆಯಾದ ಹೆಣ್ಣಿನಂತೆ ಜೆರುಸಲೇಮ್ ಬಿದ್ದಿದ್ದಾಳಲ್ಲಾ!</verse>
				<verse number="18">“ಸರ್ವೇಶ್ವರನು ನ್ಯಾಯಸ್ವರೂಪಿ, ನಾನಾದರೊ ಆತನ ಆಜ್ಞೆ ಮೀರಿದ ದ್ರೋಹಿ. ಜನಾಂಗಗಳೇ, ನೀವೆಲ್ಲರು ಕಿವಿಗೊಡಿ, ನನ್ನ ಸಂಕಟ ನೋಡಿ! ನನ್ನ ಯುವಕ ಯುವತಿಯರು, ಇಗೋ, ಸೆರೆಹೋಗಿರುವರು ನೋಡಿ.</verse>
				<verse number="19">“ನನ್ನ ಪ್ರಿಯರನ್ನು ಕರೆದೆ; ಅವರೇ ಮೋಸಮಾಡಿದರೆನಗೆ. ನನ್ನ ಯಾಜಕರೂ ಪ್ರಮುಖರೂ ಪಟ್ಟಣದಲ್ಲೇ ಪ್ರಾಣತೆತ್ತರು, ಉಸಿರನ್ನು ಉಳಿಸಿಕೊಳ್ಳಲು ಊಟವನ್ನು ಹುಡುಕುತ್ತಿರಲು.</verse>
				<verse number="20">“ಹೇ, ಸರ್ವೇಶ್ವರಾ, ಕಟಾಕ್ಷಿಸು; ನಾ ಇಕ್ಕಟ್ಟಿಗೆ ಸಿಕ್ಕಿಕೊಂಡಿರುವೆ. ಕರುಳು ಕುದಿಯುತ್ತಿದೆ, ಹೃದಯ ವಿಮುಖವಾಗಿದೆ ನಾ ಗೈದ ದ್ರೋಹಕ್ಕೆ, ಕತ್ತಿಗೆ ತುತ್ತಾಗುತ್ತಿರುವೆ ಹೊರಗೆ ಪ್ರಾಣಸಂಕಟಕ್ಕೆ ಗುರಿಯಾಗಿರುವೆ ಒಳಗೆ.</verse>
				<verse number="21">ಸಾಂತ್ವನ ತರುವವರಾರೂ ಇಲ್ಲವಲ್ಲಾ ನನಗೆ! ನನ್ನ ನರಳಾಟದ ಸುದ್ದಿ ಮುಟ್ಟಿದೆ ವೈರಿಗಳ ಕಿವಿಗೆ. ನನಗಾದ ಕೇಡಿಗೆ ನೀನೇ ಕಾರಣನೆಂಬ ಸಂತಸ ಶತ್ರುವಿಗೆ. ನೀ ಮುಂತಿಳಿಸಿದ ಮೇರೆಗೆ ನನಗಾದ ಗತಿ ಬರಲಿ ಅವರಿಗೆ.</verse>
				<verse number="22">“ಅವರು ಗೈದ ಕೆಡುಕೆಲ್ಲಾ ಬಟ್ಟಬಯಲಾಗಲಿ ನಿನ್ನ ದೃಷ್ಟಿಗೆ. ನನ್ನ ದ್ರೋಹಕ್ಕೆ ಪ್ರತಿಯಾಗಿ ನನಗೆ ಮಾಡಿರುವಂತೆ ನೀ ಮಾಡು ಅವರಿಗೆ. ನನ್ನ ನರಳಾಟ ಹೆಚ್ಚಿದೆ; ನನ್ನ ಎದೆ ಕುಂದಿಹೋಗಿದೆ.”</verse>
			</chapter>
			<chapter number="2">
				<verse number="1">ಅಯ್ಯಯ್ಯೋ, ಸ್ವಾಮಿಯೆ ಸಿಟ್ಟುಗೊಂಡಿರುವನಲ್ಲಾ! ಸಿಯೋನ್ ಕುವರಿಗೆ ಕಾರ್ಮೋಡ ಕವಿದಂತೆ ಮಾಡಿರುವನಲ್ಲಾ! ಇಸ್ರಯೇಲಿನ ವೈಭವವನ್ನು ಆಗಸದಿಂದ ನೆಲಕ್ಕೆಸೆದುಬಿಟ್ಟಿರುವನಲ್ಲಾ! ಆ ಸಿಟ್ಟಿನ ದಿನದಂದು ತನ್ನ ಪಾದಪೀಠವಾದ ದೇವಾಲಯವನ್ನೂ ನೆನೆಯದೆಹೋದನಲ್ಲಾ!</verse>
				<verse number="2">ಸ್ವಾಮಿ ಯಕೋಬಿನ ನಿವಾಸಿಗಳನ್ನು ನಾಶಪಡಿಸಿಹನು, ರೌದ್ರದಿಂದ ಯೆಹೂದ ಕೋಟೆಗಳನ್ನು ನೆಲಸಮವಾಗಿಸಿಹನು, ರಾಜ್ಯವನ್ನೂ ಅದರ ಪಾಲಕರನ್ನೂ ನೀಚಸ್ಥಿತಿಗೆ ಇಳಿಸಿಹನು.</verse>
				<verse number="3">ಶತ್ರು ಬಂದೆರಗಿದಾಗ ಸ್ವಾಮಿ ತನ್ನ ಶಕ್ತಿಯುತ ಕೈಯನ್ನು ಹಿಂದೆಗೆದುಬಿಟ್ಟ, ಇಸ್ರಯೇಲಿನ ಕೋಡನ್ನು ಕಡಿದು ಪುಡಿಪುಡಿ ಮಾಡಿಬಿಟ್ಟ, ಸುತ್ತುಗಟ್ಟಿ ನುಂಗುವ ಅಗ್ನಿಜ್ವಾಲೆಯಂತೆ ಯಕೋಬನನ್ನು ದಹಿಸಿಬಿಟ್ಟ.</verse>
				<verse number="4">ಬಿಲ್ಲುಹಿಡಿದು ಬಂದ ಆತ ವೈರಿಯಂತೆ ಬಲಗೈಯೆತ್ತಿ ನಿಂತ ವಿರೋಧಿಯಂತೆ, ಸಂಹರಿಸಿಬಿಟ್ಟ ಸುಂದರ ಪ್ರಜೆಯೆಲ್ಲರನ್ನು ರೋಷಾಗ್ನಿ ಸುರಿಸಿ ಭಸ್ಮಮಾಡಿದ ಸಿಯೋನ್ ಗುಡಾರವನ್ನು.</verse>
				<verse number="5">ಸ್ವಾಮಿಯೇ ಶತ್ರುವಾಗಿ ಕಬಳಿಸಿದ ಇಸ್ರಯೇಲನ್ನು ನಾಶಮಾಡಿದ ಅದರ ಅರಮನೆಗಳೆಲ್ಲವನ್ನು ನೆಲಸಮಗೊಳಿಸಿದ ಅದರ ಕೋಟೆಕೊತ್ತಲಗಳನ್ನು ಯಥೇಚ್ಛವಾಗಿಸಿದ ಯೆಹೂದ ನಾಡಿನ ಗೋಳಾಟವನ್ನು.</verse>
				<verse number="6">ತನ್ನ ಗರ್ಭಗುಡಿಯನ್ನೂ ಉತ್ಸವಸ್ಥಾನವನ್ನೂ ಹಾಳುಮಾಡಿದ ತೋಟದ ಗುಡಿಸಲನ್ನೋ ಎಂಬಂತೆ. ಮಹೋತ್ಸವಗಳನ್ನೂ ಸಬ್ಬತ್‍ದಿನಗಳನ್ನೂ ಅಳಿಸಿಬಿಟ್ಟ ನೆನಪಿಗೂ ಬಾರದಂತೆ. ರಾಜರನ್ನೂ ಯಾಜಕರನ್ನೂ ಸರ್ವೇಶ್ವರ ಧಿಕ್ಕರಿಸಿದ ಅತಿ ರೋಷಾವೇಷಗೊಂಡವನಂತೆ.</verse>
				<verse number="7">ಸ್ವಾಮಿ ತಿರಸ್ಕರಿಸಿಬಿಟ್ಟಿದ್ದಾನೆ ತನ್ನ ಬಲಿಪೀಠವನ್ನೇ ಅಸಹ್ಯಗೊಂಡು ತೊರೆದುಬಿಟ್ಟಿದ್ದಾನೆ ತನ್ನ ಪವಿತ್ರಸ್ಥಾನವನ್ನೇ ಸಿಯೋನ್ ಅರಮನೆಯ ಗೋಡೆಗಳನ್ನು ಕೆಡವಲು ಬಿಟ್ಟಿದ್ದಾನೆ ಹಗೆಗಳನ್ನೇ. ಹಬ್ಬಹರಿದಿನಗಳ ಜಯಘೋಷವೋ ಎಂಬಂತೆ ಘೋಷಣೆ ಹಾಕುತ್ತಿದ್ದಾರಲ್ಲಾ ಶತ್ರುಗಳು ಸರ್ವೇಶ್ವರನ ಮಂದಿರದಲ್ಲೆ!</verse>
				<verse number="8">ಸಿಯೋನ್ ನಗರಿಯ ಕೋಟೆಯನ್ನು ನಾಶಪಡಿಸಲೆಂದು ಎಳೆದಿರುವನಲ್ಲಾ ಸರ್ವೇಶ್ವರ ಅಳತೆನೂಲನ್ನು! ಹಾಳುಮಾಡುವ ತನ್ನ ಕೈಯನ್ನು ಹಿಂದೆಗೆಯದೆ ಬಿರುಕುಗೊಳಿಸಿದ್ದಾನೆ ಪೌಳಿಗೋಡೆಯನ್ನೇ, ಕೋಟೆಯನ್ನೇ, ಅವುಗಳೆರಡೂ, ಕುಸಿದು ಬಿದ್ದುಹೋಗಿವೆ.</verse>
				<verse number="9">ಹೂತುಹೋಗಿವೆ ಸಿಯೋನ್ ಹೆಬ್ಬಾಗಿಲುಗಳು ಚೂರುಚೂರಾಗಿ ಬಿದ್ದಿವೆ ಅದರ ಅಗುಳಿಗಳು. ಅರಸರೂ ಪಾಲಕರೂ ಸೇರಿಹೋದರು ಅನ್ಯಜನಾಂಗಗಳೊಳು. ನಿಂತುಹೋಗಿವೆ ಧರ್ಮಶಾಸ್ತ್ರ ಬೋಧನೆಗಳು. ಸರ್ವೇಶ್ವರನಿಂದ ಪ್ರವಾದಿಗಳಿಗೆ ಆಗುತ್ತಿದ್ದ ದಿವ್ಯದರ್ಶನಗಳು.</verse>
				<verse number="10">ತಲೆಯ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸೊಂಟಕ್ಕೆ ಸುತ್ತಿಕೊಂಡು ಕುಕ್ಕರಿಸಿಹರು ಸಿಯೋನ್ ನಗರಿಯ ಪ್ರಮುಖರು ತಲೆ ತಗ್ಗಿಸಿಹರು ಜೆರುಸಲೇಮಿನ ಯುವತಿಯರು.</verse>
				<verse number="11">ಕಂಬನಿಗರೆದು ಇಂಗಿಹೋಗಿದೆ ಕಣ್ಣು ಕುದಿಯುತ್ತಿದೆ ನನ್ನೊಳಗೆ ಕರುಳು! ನನ್ನ ಜನತೆಯೆಂಬ ಯುವತಿ ಹಾಳಾಗಿ ಮಕ್ಕಳು ಹಾದಿಬೀದಿಗಳಲ್ಲಿ ಮೂರ್ಛೆಹೋಗಿ ನನ್ನ ಕರುಳು ಕರಗಿಹೋಗಿದೆ ನೀರಾಗಿ.</verse>
				<verse number="12">‘ಅಮ್ಮಾ ತಿನ್ನಲಿಕ್ಕಿಲ್ಲವೆ? ಕುಡಿಯಲಿಕ್ಕಿಲ್ಲವೆ? ಎನ್ನುತ ಮಕ್ಕಳು ಮೂರ್ಛೆಗೊಂಡಿವೆ. ಗಾಯಗೊಂಡವರಂತೆ ನಗರದ ಚೌಕಗಳೊಳು ಪ್ರಾಣಬಿಡುತ್ತಿವೆಯಲ್ಲಾ ತಾಯಿಯ ಎದೆಯ ಮೇಲೆ ಆ ಹಸುಳೆಗಳು.</verse>
				<verse number="13">ಎಲೌ ಜೆರುಸಲೇಮ್ ಯುವತಿಯೇ, ನಿನಗೆ ಏನು ಹೇಳಲಿ? ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಸಿಯೋನ್ ಕನ್ಯೆಯೇ, ನಿನ್ನನ್ನು ಹೇಗೆ ಸಂತೈಸಲಿ? ಸಂತೈಸುವ ಸಾಮತಿಯನ್ನು ಎಲ್ಲಿಂದ ತರಲಿ? ನಿನಗೊದಗಿರುವ ನಾಶ ಸಾಗರದಂತೆ ಅಪಾರ ನಿನ್ನನ್ನು ಸ್ವಸ್ಥಗೊಳಿಸಲು ಯಾರಿಂದ ತಾನೆ ಸಾಧ್ಯ?</verse>
				<verse number="14">ನಿನ್ನ ಪ್ರವಾದಿಗಳು ಕಂಡ ದರ್ಶನದಲ್ಲಿ ಸಾರವಿಲ್ಲ, ಅರ್ಥವಿಲ್ಲ. ನಿನ್ನ ದೋಷಗಳನ್ನು ಬೈಲಿಗೆಳೆಯಲು ಅವರಿಂದಾಗಲಿಲ್ಲ. ಈ ಕಾರಣ, ನಿನ್ನ ದುರವಸ್ಥೆಯನ್ನು ತಡೆಗಟ್ಟಲಾಗಲಿಲ್ಲ. ನಿನ್ನ ಬಗ್ಗೆ ಅವರು ನುಡಿದ ದೈವೋಕ್ತಿಗಳು ವ್ಯರ್ಥವಾದುವು, ನೀನು ಗಡಿಪಾರಾಗಿ ಹೋಗಲು ಅವು ಆಸ್ಪದವಾದುವು.</verse>
				<verse number="15">ಹಾದುಹೋಗುವವರೆಲ್ಲ ಕೈ ತಟ್ಟುತ್ತಾರಲ್ಲಾ ನಿನ್ನನ್ನು ನೋಡಿ ಜೆರುಸಲೇಮ್ ನಗರಿಯಾದ ನಿನ್ನನ್ನು ಗುರುತಿಸಿ! “ಆಹಾ, ನೀನೇನೋ ಸರ್ವಾಂಗ ಸುಂದರಿ, ವಿಶ್ವಾನಂದದಾಯಕಿ!” ಎಂದು ಮೂದಲಿಸುತ್ತಾರಲ್ಲಾ ತಲೆಯಾಡಿಸಿ, ಸಿಳ್ಳುಹಾಕಿ!</verse>
				<verse number="16">ನಿನ್ನನ್ನು ನೋಡಿ ಶತ್ರುಗಳೆಲ್ಲರು ಕಟಕಟನೆ ಹಲ್ಲು ಕಡಿಯುತ್ತಾರಲ್ಲಾ ಬಾಯಿ ಕಿಸಿದು! “ಹಾ, ಆಕೆಯನ್ನು ಕಬಳಿಸಿಬಿಟ್ಟೆವು ಈ ದಿನಕ್ಕಾಗಿಯೆ ನಾವು ಕಾದಿದ್ದೆವು ಈಗ ಅದನ್ನು ಕಣ್ಣಾರೆ ಕಂಡೆವು” ಎಂದು ಕೊಚ್ಚಿಕೊಳ್ಳುತ್ತಾರಲ್ಲಾ!</verse>
				<verse number="17">ಸರ್ವೇಶ್ವರ ಸಿದ್ಧಿಗೆ ತಂದಿದ್ದಾನೆ ತನ್ನ ಸಂಕಲ್ಪವನ್ನು ಈಡೇರಿಸಿದ್ದಾನೆ ಪುರಾತನ ಕಾಲದಲ್ಲಿ ತಾನು ನುಡಿದುದನ್ನು. ನಿನ್ನನ್ನು ಧ್ವಂಸಮಾಡಿದ್ದಾನೆ ದಯೆದಾಕ್ಷಿಣ್ಯವಿಲ್ಲದೆ. ಆನಂದ ತಂದಿದ್ದಾನೆ ವೈರಿಗಳಿಗೆ ಕೋಡುಮೂಡಿಸಿದ್ದಾನೆ ವಿರೋಧಿಗಳಿಗೆ!</verse>
				<verse number="18">ನಿನ್ನ ಜನರು ಮೊರೆಯಿಡಲಿ ಮನಃಪೂರ್ವಕವಾಗಿ ಸಿಯೋನ್ ನಗರದ ಕೋಟೆಗೆ ಕೋಟೆಯೇ ಕಣ್ಣೀರಿಡಲಿ. ಹಗಲಿರುಳು ಕಂಬನಿ ಹರಿಯಲಿ ತೊರೆಯಂತೆ ನಿಮ್ಮ ನೇತ್ರಗಳಿಂದ ಸುರಿಯಲಿ ಒಂದೇ ಸಮನೆ.</verse>
				<verse number="19">ರಾತ್ರಿಯ ಒಂದೊಂದು ಜಾವದಲ್ಲೂ ಎದ್ದು ಗೋಳಾಡಿರಿ. ನಿಮ್ಮ ಹೃದಯ ಕರಗಿ, ನೀರಾಗಿ ಸ್ವಾಮಿಯ ಮುಂದೆ ಹರಿಯಲಿ. ನಿಮ್ಮ ಮಕ್ಕಳ ಪ್ರಾಣವನ್ನು ಉಳಿಸಬೇಕೆಂದು ಕೈ ಮುಗಿದು ಪ್ರಾರ್ಥನೆಮಾಡಿ. ಹಸಿವಿನಿಂದ ಅವು ಮೂರ್ಛೆಹೋಗಿವೆ, ಬೀದಿಯ ಮೂಲೆಮೂಲೆಗಳಲ್ಲಿ.</verse>
				<verse number="20">ಹೇ, ಸರ್ವೇಶ್ವರಾ ಕಟಾಕ್ಷಿಸು! ಇಷ್ಟೆಲ್ಲಾ ನೀ ಮಾಡಿದ್ದು ಯಾರಿಗೆಂದು ಯೋಚಿಸು! ತಾಯಂದಿರು ತಿನ್ನಬೇಕೆ ತಾವು ಆರೈಕೆ ಮಾಡಿದ ತಮ್ಮ ಕರುಳ ಕುಡಿಯನ್ನೇ? ಹತರಾಗಬೇಕೆ ಯಾಜಕರೂ ಪ್ರವಾದಿಗಳೂ ಸ್ವಾಮಿಯ ಪವಿತ್ರಾಲಯದಲ್ಲೆ?</verse>
				<verse number="21">ವಯಸ್ಕರೂ ವೃದ್ಧರೂ ಬಿದ್ದಿದ್ದಾರೆ ಬೀದಿಗಳಲ್ಲೆ ತರುಣತರುಣಿಯರು ತುತ್ತಾಗಿದ್ದಾರೆ ಖಡ್ಗಗಳಿಗೆ. ನಿನ್ನ ಪ್ರಕೋಪದ ದಿನದಂದು ಹತಮಾಡಿದೆಯಲ್ಲಾ ಅವರನ್ನು ಕನಿಕರಿಸದೆ!</verse>
				<verse number="22">ಸುತ್ತಮುತ್ತಲೂ ದಿಗಿಲು ಹುಟ್ಟಿಸುವ ನನ್ನ ಹಗೆಗಳನ್ನೆ ಕರೆಸಿದೆಯಲ್ಲಾ ಹಬ್ಬಕ್ಕೋ ಎಂಬಂತೆ! ಸರ್ವೇಶ್ವರನ ಪ್ರಕೋಪದ ದಿನದಂದು ತಪ್ಪಿಸಿಕೊಳ್ಳಲಿಲ್ಲ ಯಾರೂ; ಉಳಿಯಲಿಲ್ಲ ಯಾರೂ. ಶತ್ರು ಸಂಹರಿಸಿಬಿಟ್ಟನಲ್ಲಾ ನಾನು ಸಾಕಿ ಆರೈಕೆ ಮಾಡಿದವರನ್ನೂ!</verse>
			</chapter>
			<chapter number="3">
				<verse number="1">ಸರ್ವೇಶ್ವರನ ಕೋಪವೆಂಬ ಕೋಲಿನಿಂದಲೇ ಪೆಟ್ಟುತಿಂದ ವ್ಯಕ್ತಿಯೆಂದರೆ ನಾನೇ</verse>
				<verse number="2">ಆತ ನನ್ನನ್ನು ಕರೆದೊಯ್ದು ಬೆಳಕಿನಲ್ಲಿ ಅಲ್ಲ, ಕತ್ತಲಲ್ಲೇ ನಡೆಸಿದ.</verse>
				<verse number="3">ಹೌದು ದಿನವಿಡೀ, ಪದೇ ಪದೇ ಕೈಮಾಡುತ್ತಾ ಬಂದಿಹನು ನನ್ನ ಮೇಲೆ.</verse>
				<verse number="4">ಸವೆಸಿರುವನು ನನ್ನ ಮಾಂಸಚರ್ಮಗಳನ್ನು ಮುರಿದಿರುವನು ನನ್ನ ಎಲುಬುಗಳನ್ನು.</verse>
				<verse number="5">ನನ್ನನ್ನು ಹಿಡಿದು ಬಂದಿಸಿರುವನು ದಿಬ್ಬಗಳ ಮಧ್ಯೆ ಸುತ್ತುಗಟ್ಟಿರುವನು ಕಷ್ಟಸಂಕಟಗಳ ನಡುವೆ.</verse>
				<verse number="6">ಎಷ್ಟೋ ದಿನಗಳ ಹಿಂದೆ ಸತ್ತವರ ಜೊತೆಯಲ್ಲಿ ನನ್ನನ್ನು ಇರಿಸಿದ್ದಾನೆ ಆ ಕಾರ್ಗತ್ತಲಲ್ಲಿ.</verse>
				<verse number="7">ನಾನು ಹೊರಗಡೆ ಹೋಗದಂತೆ ಗೋಡೆಯೆಬ್ಬಿಸಿರುವನು, ಭಾರವಾದ ಬೇಡಿಗಳನ್ನು ನನಗೆ ತೊಡಿಸಿರುವನು.</verse>
				<verse number="8">ಎಷ್ಟೋ ಮೊರೆಯಿಟ್ಟು ಕೂಗಿಕೊಂಡೆ. ಕಿವಿಗೊಡಲಿಲ್ಲ ಆತ ನನ್ನ ಮೊರೆಗೆ.</verse>
				<verse number="9">ನನ್ನ ದಾರಿಗೆ ಅಡ್ಡವಾಗಿ ನೆಟ್ಟಿರುವನು ಮೊನಚು ಕಲ್ಲುಗಳನ್ನು, ಡೊಂಕು ಡೊಂಕು ಮಾಡಿರುವನು ನನ್ನ ಹಾದಿಯನ್ನು.</verse>
				<verse number="10">ನನಗಾಗಿ ಆತ ಹೊಂಚುಹಾಕುತ್ತಿರುವನು ಕರಡಿಯಂತೆ ಗುಹೆಯಲ್ಲಿ ಅಡಗಿಕೊಂಡಿರುವನು ಸಿಂಹದಂತೆ.</verse>
				<verse number="11">ಆತ ನನಗೆ ದಾರಿ ತಪ್ಪಿಸಿರುವನು ತುಂಡರಿಸಿ ದಿಕ್ಕಿಲ್ಲದವನಂತೆ ಮಾಡಿರುವನು.</verse>
				<verse number="12">ತನ್ನ ಬಿಲ್ಲನ್ನು ಬಗ್ಗಿಸಿರುವನು ಬಾಣಕ್ಕೆ ನನ್ನನ್ನು ಗುರಿಮಾಡಿಕೊಂಡಿರುವನು.</verse>
				<verse number="13">ತನ್ನ ಬತ್ತಳಿಕೆಯ ಅಂಬುಗಳಿಂದ ಇರಿದಿದ್ದಾನೆ ನನ್ನ ಅಂತರಂಗವನ್ನು.</verse>
				<verse number="14">ಹಾಸ್ಯಾಸ್ಪದನಾದೆ ಸ್ವಜನರೆಲ್ಲರಿಗೆ ಗುರಿಯಾದೆ ಅವರ ದಿನನಿತ್ಯದ ಗೇಲಿ ಲಾವಣಿಗಳಿಗೆ.</verse>
				<verse number="15">ಆತ ನನಗೆ ಕಹಿ ಉಣ್ಣಿಸಿದ್ದಾನೆ ಹೊಟ್ಟೆತುಂಬ ನನ್ನನ್ನು ತಣಿಸಿದ್ದಾನೆ ವಿಷಪದಾರ್ಥಗಳಿಂದ.</verse>
				<verse number="16">ನನ್ನ ಹಲ್ಲು ಮುರಿದಿದ್ದಾನೆ ನುರುಜುಗಲ್ಲಿನಿಂದ ನನ್ನನ್ನು ಮುಚ್ಚಿಬಿಟ್ಟಿದ್ದಾನೆ ಬೂದಿಯಿಂದ.</verse>
				<verse number="17">ಶಾಂತಿಸಮಾಧಾನಕ್ಕೆ ನಾನು ದೂರವಾದೆ ಸುಖಸಂತೋಷವನ್ನು ಮರೆತುಹೋದೆ.</verse>
				<verse number="18">ನಾನು ಇಂತೆಂದುಕೊಂಡೆ: ಅಯ್ಯೋ, ನನ್ನ ಶಕ್ತಿಯೆಲ್ಲಾ ಹಾಳಾಯಿತು ಸರ್ವೇಶ್ವರನಲ್ಲಿ ನಾನಿತ್ತ ನಿರೀಕ್ಷೆ ವ್ಯರ್ಥವಾಯಿತು.”</verse>
				<verse number="19">ನಾನು ಪಟ್ಟ ಕಷ್ಟದುಃಖವನ್ನು ಮನಸ್ಸಿಗೆ ತಂದುಕೊಂಡಾಗ ಆಗುತ್ತಿದೆ ನನಗೆ ಕಹಿಯಾದ ಅನುಭವ.</verse>
				<verse number="20">ಮನದಲ್ಲೆ ಇವುಗಳನ್ನು ನಿತ್ಯವೂ ನೆನೆದಾಗ ನನ್ನೊಳಗೇ ಸೊರಗಿಹೋಗುತ್ತದೆ ನನ್ನ ಮನ.</verse>
				<verse number="21">ಇಂತಿರಲು ನಿನ್ನ ಕರುಣೆಯನ್ನು ನೆನಪಿಗೆ ತಂದುಕೊಳ್ಳುತ್ತೇನೆ ಅದರಿಂದಲೆ ನನಗೆ ನಂಬಿಕೆ-ನಿರೀಕ್ಷೆ ಮರುಕಳಿಸುತ್ತದೆ.</verse>
				<verse number="22">ನಾವು ಉಳಿದಿರುವುದು ಸರ್ವೇಶ್ವರನ ಕರುಣೆಯಿಂದ ಆತನ ಕೃಪಾವರಗಳಿಗೆ ಕೊನೆಯೇ ಇಲ್ಲ.</verse>
				<verse number="23">ಹೊಸಹೊಸದಾಗಿ ಅವು ಒದಗುತ್ತವೆ ದಿನದಿನವು ಮಹತ್ತರವಾದುದು ಆತನ ಸತ್ಯಸಂಧತೆಯು.</verse>
				<verse number="24">“ನನ್ನ ಪಾಲಿನ ಸೊತ್ತು ಸರ್ವೇಶ್ವರನೇ, ನಿರೀಕ್ಷಿಸುತ್ತಿರುವೆನು ನಾನು ಆತನನ್ನೇ” ಇಂತೆಂದುಕೊಳ್ಳುತ್ತದೆ ನನ್ನ ಅಂತರಾತ್ಮ.</verse>
				<verse number="25">ಸರ್ವೇಶ್ವರ ಒಳ್ಳೆಯವನು ಆತನನ್ನು ನಿರೀಕ್ಷಿಸುವವರಿಗೆ ಆತನನ್ನು ಹರಸಿ ಹಂಬಲಿಸುವ ಜನರಿಗೆ.</verse>
				<verse number="26">ಸರ್ವೇಶ್ವರನು ನಮ್ಮನ್ನು ಉದ್ಧರಿಸುವನೆಂದು ಎದುರುನೋಡುತ್ತಾ ತಾಳ್ಮೆಯಿಂದಿರುವುದು ಒಳಿತು.</verse>
				<verse number="27">ಯೌವನದಿಂದಲೆ ನೊಗ ಹೊತ್ತರೆ ಮಾನವನಿಗೆ ಅದು ಹಿತಕರ.</verse>
				<verse number="28">‘ನನ್ನ ಮೇಲೆ ಇದನ್ನು ಹೇರಿಸಿದನು ಸರ್ವೇಶ್ವರನು ಎಂದು ಏಕಾಕಿಯಾಗಿ ಕುಳಿತು ಮೌನದಿಂದಿರು.</verse>
				<verse number="29">	ಮಣ್ಣು ಮುಕ್ಕಬೇಕಾಗಿ ಬಂದರೂ</verse>
				<verse number="30">ಹೊಡೆಯುವವನಿಗೆ ಕೆನ್ನೆಕೊಡುವಾಗಲೂ ನಿಂದೆ ಅವಮಾನದಿಂದ ತೃಪ್ತಿಪಡುವಾಗಲೂ. ನಂಬಿಕೆಗೆ ಎಡೆಯಿರಲು ಸಾಧ್ಯ.</verse>
				<verse number="31">ನರಮಾನವನನ್ನು ಸ್ವಾಮಿ ಸದಾಕಾಲಕ್ಕೂ ತೊರೆದುಬಿಡುವವನಲ್ಲ.</verse>
				<verse number="32">ಒಂದು ವೇಳೆ ದುಃಖಪಡಿಸಿದರೂ ಕೃಪಾತಿಶಯದಿಂದ ಕನಿಕರಿಸಬಲ್ಲ.</verse>
				<verse number="33">ನರಮಾನವರನ್ನು ಹಿಂಸಿಸಿ ದುಃಖಪಡಿಸುವುದು ಆತನಿಗೆ ಎಷ್ಟುಮಾತ್ರಕ್ಕೂ ಇಷ್ಟವಿಲ್ಲ.</verse>
				<verse number="34">ಇಳೆಯ ಸೆರೆಯಾಳುಗಳನ್ನು ತುಳಿದುಬಿಡುವುದನ್ನೂ</verse>
				<verse number="35">ಪರಾತ್ಪರನ ಸನ್ನಿಧಿಯಲ್ಲೇ ನ್ಯಾಯ ತಪ್ಪಿಸುವುದನ್ನೂ</verse>
				<verse number="36">ಅನ್ಯಾಯವಾಗಿ ವ್ಯಾಜ್ಯತೀರಿಸುವುದನ್ನೂ ಸ್ವಾಮಿ ಲಕ್ಷ್ಯಕ್ಕೆ ತಂದುಕೊಳ್ಳದೆ ಇರುತ್ತಾನೆಯೇ?</verse>
				<verse number="37">ಸ್ವಾಮಿಯ ಅಪ್ಪಣೆಯಿಲ್ಲದೆ ಯಾರ ಮಾತೂ ಸಾರ್ಥಕವಾಗದು.</verse>
				<verse number="38">ಒಳಿತು-ಕೇಡು ಸಂಭವಿಸುವುದು ಪರಾತ್ಪರನ ಮಾತಿನಿಂದ ಅಲ್ಲವೆ?</verse>
				<verse number="39">ಜೀವಾತ್ಮನಾದ ಮಾನವನು ತನ್ನ ಪಾಪದ ಶಿಕ್ಷೆಗಾಗಿ ಗೊಣಗುಟ್ಟುವುದೆಂತು?</verse>
				<verse number="40">ನಮ್ಮ ನಡತೆಯನ್ನು ಪರೀಕ್ಷಿಸಿ ಪರಿಶೋಧಿಸೋಣ ಸರ್ವೇಶ್ವರನ ಕಡೆಗೆ ತಿರುಗಿಕೊಳ್ಳೋಣ;</verse>
				<verse number="41">ಪರಲೋಕದಲ್ಲಿರುವ ದೇವರ ಕಡೆಗೆ ನಮ್ಮ ಕರಗಳನ್ನೂ ಹೃನ್ಮನಗಳನ್ನೂ ಎತ್ತೋಣ;</verse>
				<verse number="42">“ನಾವು ಅವಿಧೇಯರಾಗಿ ಪಾಪಮಾಡಿದೆವು ನೀನು ಕ್ಷಮಿಸಲಿಲ್ಲ ನಮ್ಮನ್ನು.</verse>
				<verse number="43">“ರೋಷಭರಿತನಾಗಿ ನೀನು ಬೆನ್ನಟ್ಟಿಬಂದೆ ದಯೆದಾಕ್ಷಿಣ್ಯವಿಲ್ಲದೆ ನಮ್ಮನ್ನು ಹತಿಸಿದೆ.</verse>
				<verse number="44">ನಮ್ಮ ಪ್ರಾರ್ಥನೆ ನಿನಗೆ ಮುಟ್ಟಬಾರದೆಂದೆ ಮೋಡಗಳ ಹಿಂದೆ ಮರೆಮಾಡಿಕೊಂಡೆ.</verse>
				<verse number="45">ಕಸವನ್ನಾಗಿಯೂ ಹೊಲಸನ್ನಾಗಿಯೂ ನಮ್ಮನ್ನು ಎಸೆದುಬಿಟ್ಟೆ ರಾಷ್ಟ್ರಗಳ ನಡುವೆ.</verse>
				<verse number="46">“ಶತ್ರುಗಳೆಲ್ಲರು ನಮ್ಮನ್ನು ನೋಡಿ ಬಾಯಿ ಕಿಸಿದಿದ್ದಾರೆ ನಮಗೆ ವಿರುದ್ಧವಾಗಿ.</verse>
				<verse number="47">ಹಳ್ಳಗುಂಡಿಗಳು, ಭಯಭೀತಿಗಳು, ನಾಶವಿನಾಶಗಳು ನಮ್ಮ ಪಾಲಿಗೆ ಕಟ್ಟಿಟ್ಟ ಬುತ್ತಿಗಳು.</verse>
				<verse number="48">ಸ್ವಜನರು ನಾಶವಾದ ಕಾರಣದಿಂದಾಗಿ ಹರಿಯುತ್ತಿದೆ ನನ್ನ ಕಣ್ಣೀರು ತೊರೆಯಾಗಿ.</verse>
				<verse number="49">“ಸರ್ವೇಶ್ವರನು ಪರಲೋಕದಿಂದ ಕಟಾಕ್ಷಿಸಿ ನೋಡುವವರೆಗೂ</verse>
				<verse number="50">	ಹರಿಯುತ್ತಿರುವುದು ನಿರಂತರವಾಗಿ ನನ್ನ ಕಣ್ಣೀರು.</verse>
				<verse number="51">ನಗರದ ಯುವತಿಯರ ದುರ್ಗತಿಯನ್ನು ನೋಡಿ ಅಳುತ್ತಿರುವ ನನ್ನನ್ನು ಕಾಡುತ್ತಿದೆ ಕಣ್ಣುರಿ.</verse>
				<verse number="52">“ಹಕ್ಕಿಯನ್ನು ಬೇಟೆಯಾಡುವವರೋ ಎಂಬಂತೆ ನಿಷ್ಕಾರಣ ವೈರಿಗಳು ಬೆನ್ನಟ್ಟಿ ಓಡಿಬಂದರು ನನ್ನ ಹಿಂದೆ.</verse>
				<verse number="53">ನನ್ನನ್ನು ಗುಳಿಯಲ್ಲಿಳಿಸಿ ಕಲ್ಲು ಮುಚ್ಚಿದರು ನನ್ನ ಪ್ರಾಣ ತೆಗೆಯಲು ಪ್ರಯತ್ನಿಸಿದರು.</verse>
				<verse number="54">ಪ್ರವಾಹವು ನನ್ನನ್ನು ಮುಳುಗಿಸಿತು; ಆಗ ಸತ್ತೆ ಎಂದುಕೊಂಡೆ ನಾನು.</verse>
				<verse number="55">“ಹೇ ಸರ್ವೇಶ್ವರಾ, ಆಳವಾದ ಗುಳಿಯಲ್ಲಿ ನಾ ಕುಳಿತೆ ನಿನ್ನ ಹೆಸರೆತ್ತಿ ನಾನು ಪ್ರಾರ್ಥನೆಮಾಡಿದೆ.</verse>
				<verse number="56">ನನ್ನ ನಿಟ್ಟುಸಿರಿಗೂ ಮೊರೆಗೂ ಕಿವಿಮುಚ್ಚಿಕೊಳ್ಳಬೇಡ ಎಂದೆ ಆಗ ನೀನು ನನ್ನ ಧ್ವನಿಯನ್ನು ಕೇಳಿದೆ.</verse>
				<verse number="57">ನಿನ್ನನ್ನು ಕೂಗಿಕೊಂಡಾಗ ಸಮೀಪಕ್ಕೆ ಬಂದೆ “ಭಯಪಡಬೇಡ” ಎಂದು ಅಭಯನೀಡಿದೆ.</verse>
				<verse number="58">“ಸ್ವಾಮೀ, ನೀನೇ ನನ್ನ ಪರವಾಗಿ ವಾದಿಸಿದೆ ನನ್ನ ಪ್ರಾಣವನ್ನು ಉಳಿಸಿದೆ.</verse>
				<verse number="59">ಸರ್ವೇಶ್ವರಾ, ನಿನಗೆ ತಿಳಿದಿದೆ ನನಗಾದ ಅನ್ಯಾಯ ದೊರಕುವಂತೆ ಮಾಡು ನನಗೆ ನ್ಯಾಯ.</verse>
				<verse number="60">ನೀನೇ ನೋಡಿರುವೆ ವೈರಿಗಳು ನನ್ನ ವಿರುದ್ಧ ಸಾಧಿಸಿದ ಹಗೆಯನ್ನು ಅವರು ಕಲ್ಪಿಸಿಕೊಂಡ ಕುಯುಕ್ತಿಯನ್ನು.</verse>
				<verse number="61">“ಸರ್ವೇಶ್ವರಾ, ನಿನ್ನ ಕಿವಿಗೆ ಬಿದ್ದಿದೆ ನನ್ನ ವೈರಿ ಕಲ್ಪಿಸಿದ ಕುಯುಕ್ತಿ.</verse>
				<verse number="62">ನನ್ನ ಹಾನಿಗಾಗಿ ನಿತ್ಯವೂ ಮಾಡುತ್ತಿರುವ ನಿಂದೆ ಅವಮಾನ, ತಂತ್ರೋಪಾಯ.</verse>
				<verse number="63">ಇಗೋ ನೋಡು, ಅವರು ಕುಳಿತಾಗಲೂ, ನಿಂತಾಗಲೂ ಹಾಸ್ಯ, ಲಾವಣಿಗಳಿಗೆ ಗುರಿಯಾಗಿರುವೆ ನಾನು.</verse>
				<verse number="64">“ಹೇ, ಸರ್ವೇಶ್ವರಾ, ಅವರ ದುಷ್ಕೃತ್ಯಗಳಿಗೆ ತಕ್ಕ ಪ್ರತೀಕಾರ ನೀಡು ಅವರಿಗೆ.</verse>
				<verse number="65">ಅವರ ಮನಸ್ಸನ್ನು ಮಂಕುಮಾಡು ಅವರಿಗೆ ನಿನ್ನ ಶಾಪ ತಗಲುವಂತೆ ಮಾಡು.</verse>
				<verse number="66">ಸಿಟ್ಟುಗೊಂಡು ಅವರನ್ನು ಹಿಂದಟ್ಟು ನಿನ್ನ ಆಕಾಶದ ಕೆಳಗಿನಿಂದ ಅವರನ್ನು ಅಳಿಸಿಹಾಕು\.</verse>
			</chapter>
			<chapter number="4">
				<verse number="1">ಅಕಟಕಟಾ! ಎಷ್ಟು ಮಸುಕಾಗಿದೆ ಬಂಗಾರ ಎಷ್ಟು ಕಾಂತಿಹೀನವಾಗಿಬಿಟ್ಟಿವೆ ಅಪ್ಪಟ ಚಿನ್ನ! ಪವಿತ್ರಾಲಯದ ಕಲ್ಲುಗಳೂ ಬಿದ್ದಿವೆ ಚೆಲ್ಲಾಪಿಲ್ಲಿಯಾಗಿ ಬೀದಿಬೀದಿಗಳ ಬದಿಯಲ್ಲಿ ರಾಶಿರಾಶಿಯಾಗಿ!</verse>
				<verse number="2">ಅಯ್ಯೋ, ಅಪರಂಜಿಯಂತೆ ಅಮೂಲ್ಯವಾಗಿದ್ದ ಸಿಯೋನ್ ಪ್ರಜೆ ಇಂದು ಬೇಡವೆಂದು ಬಿಸಾಡಿದ ಕುಂಬಾರನ ಮಣ್ಣುಮಡಕೆ! ಅಮೂಲ್ಯವಾಗಿದ್ದರು ಸಿಯೋನಿನ ಪ್ರಜೆಗಳು ಅಪರಂಜಿಯಂತೆ ಅಯ್ಯೋ ಈಗ ಅವರಾಗಿಹರು ಕುಂಬಾರನೆ ಬಿಸಾಡಿದ ಮಡಕೆಯಂತೆ.</verse>
				<verse number="3">ಮರಿಗಳಿಗೆ ಮೊಲೆಕೊಟ್ಟು ಹಾಲುಣಿಸುತ್ತವೆ ನರಿಗಳು ನನ್ನ ಜನರು ಆಗಿಹರು ಕಾಡಿನ ಉಷ್ಟ್ರಪಕ್ಷಿಯಂತೆ ಕ್ರೂರಿಗಳು.</verse>
				<verse number="4">ದಾಹದಿಂದ ಸೇದುಹೋಗಿದೆ ಮೊಲೆಕೂಸಿನ ನಾಲಿಗೆ ಅನ್ನವಿಕ್ಕುವರಾರೂ ಇಲ್ಲ, ಹಂಬಲಿಸುವ ಆ ಹಸುಳೆಗಳಿಗೆ.</verse>
				<verse number="5">ಮೃಷ್ಟಾನ್ನ ಉಣ್ಣುತ್ತಿದ್ದವರು ದಿಕ್ಕೆಟ್ಟು ಅಲೆಯುತ್ತಿರುವರು ಚಿಕ್ಕಂದಿನಿಂದಲೆ ನಾರುಮಡಿಯನ್ನು ತೊಡುತ್ತಿದ್ದವರು ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿಗೆ ಇಳಿದಿರುವರು.</verse>
				<verse number="6">‘ಸೊದೋಮ್’ ಊರು ಹಾಳಾಯಿತು ಕ್ಷಣಮಾತ್ರದಲ್ಲೆ ಅದರ ಮೇಲೆ ಯಾರೂ ಕೈಮಾಡದೆಯೇ. ಅದಕ್ಕಿಂತಲೂ ಹೆಚ್ಚಾಯಿತಲ್ಲಾ ನನ್ನ ಜನರ ಅಧರ್ಮ!</verse>
				<verse number="7">ನನ್ನ ಜನತೆಯ ಮಹನೀಯರು ಹಿಮಕ್ಕಿಂತ ಶುಭ್ರ, ಹಾಲಿಗಿಂತ ಬಿಳುಪು. ಅವರ ದೇಹದ ಬಣ್ಣ ಹವಳವನ್ನು ಮೀರಿತ್ತು ಅವರ ರೂಪ ಇಂದ್ರನೀಲ ಮಣಿಯಂತೆ ಅಂದವಾಗಿತ್ತು.</verse>
				<verse number="8">ಈಗ ಅವರ ಮುಖ ಕಾರ್ಮೋಡಕ್ಕಿಂತ ಕಪ್ಪು ಬೀದಿಗಳಲ್ಲಿ ನೋಡುತ್ತಿದ್ದವರಿಗೆ ಅವರ ಗುರುತೂ ಸಿಗದು. ಅವರ ಚರ್ಮ ಎಲುಬುಗಳಿಗೆ ಅಂಟಿಕೊಂಡಿದೆ ಅದಕ್ಕೆ ಸುಕ್ಕು ಹಿಡಿದಿದೆ; ಒಣಗಿ ಕಟ್ಟಿಗೆಯಾಗಿದೆ.</verse>
				<verse number="9">ಹಸಿವೆಯಿಂದ ಹತರಾದವರಿಗಿಂತ ಖಡ್ಗದಿಂದ ಹತರಾದವರು ಲೇಸು. ತುತ್ತಾದರು ಅವರು ಕ್ಷಾಮಕ್ಕೆ ಕ್ಷಯಿಸಿಹೋದರು ನೆಲದ ಗೆಡ್ಡೆಗೆಣಸೂ ಸಿಗದೆ.</verse>
				<verse number="10">ಕರುಣಾಮಯಿಗಳಾದ ಹೆಂಗಳೆಯರು ತಮ್ಮ ಕಂದಮ್ಮಗಳನ್ನು ಸ್ವಂತ ಕೈಯಿಂದ ಬೇಯಿಸಿದರು. ನನ್ನ ಜನರ ಪರಿವಿನಾಶದ ಕಾಲದೊಳು ತಮ್ಮ ತಾಯಿಗಳಿಗೆ ತಿಂಡಿಯಾದರು ಆ ಹಸುಳೆಗಳು.</verse>
				<verse number="11">ಸುರಿಸಿದ್ದಾನೆ ಸರ್ವೇಶ್ವರ ತನ್ನ ರೋಷಾಗ್ನಿಯನ್ನು ತೀರಿಸಿಕೊಂಡಿದ್ದಾನೆ ತನ್ನ ಉಗ್ರಕೋಪವನ್ನು. ಆತ ಹೊತ್ತಿಸಿದ ಬೆಂಕಿಗೆ ಸಿಯೋನಿನ ಅಸ್ತಿವಾರ ಆಹುತಿಯಾಗಿದೆ.</verse>
				<verse number="12">ವೈರಿಗಳೂ ವಿರೋಧಿಗಳೂ ಜೆರುಸಲೇಮಿನ ಬಾಗಿಲೊಳಗೆ ಕಾಲಿಡುವರೆಂದು ವಿಶ್ವದ ರಾಜರಾಗಲಿ, ನಿವಾಸಿಗಳಾಗಲಿ ನಂಬಿರಲಿಲ್ಲ ಯಾರೂ.</verse>
				<verse number="13">ನಗರದ ನಡುವೆಯೇ ಆದ ನೀತಿವಂತರ ರಕ್ತಪಾತದಿಂದ ಯಾಜಕರು, ಪ್ರವಾದಿಗಳು ಎಸಗಿದ ಈ ಪಾಪದೋಷಗಳಿಂದ ಬಂದೊದಗಿತು ಈ ಪರಿತಾಪವೆಲ್ಲ.</verse>
				<verse number="14">ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಿಹರು ಆ ಯಾಜಕರು ಮತ್ತು ಪ್ರವಾದಿಗಳು. ಅವರ ಬಟ್ಟೆಯನ್ನೂ ಯಾರೂ ಮುಟ್ಟರು ಏಕೆಂದರೆ ರಕ್ತದಿಂದ ಅವರು ಕಳಂಕಿತರಾಗಿಹರು.</verse>
				<verse number="15">ಅವರನ್ನು ನೋಡುವವರೂ “ತೊಲಗಿರಿ, ನೀವು ಅಶುದ್ಧರು ನಡೆಯಿರಿ, ನಡೆಯಿರಿ, ಮುಟ್ಟಬೇಡಿ” ಎಂದು ಕೂಗುತ್ತಿರುವರು. ಅವರು ಓಡಿ ಅನ್ಯನಾಡುಗಳಲ್ಲಿ ಅಲೆಯುತ್ತಿರಲು “ಇವರು ಇನ್ನು ಇಲ್ಲಿ ತಂಗಕೂಡದು” ಎನ್ನುತಿಹರು ಅಲ್ಲಿನ ನಾಡಿಗರು.</verse>
				<verse number="16">ಸರ್ವೇಶ್ವರನ ದೃಷ್ಟಿ ಅವರನ್ನು ಚದರಿಸಿದೆ ಇನ್ನು ಆತ ತೋರನು ಅವರಿಗೆ ಕರುಣೆ. ಯಾಜಕರಾದರೂ ಅವರಿಗೆ ಮರ್ಯಾದೆ ತಪ್ಪಿಹೋಗಿದೆ ಹಿರಿಯರಾದರೂ ಅವರಿಗೆ ಆದರಣೆ ಇಲ್ಲದಿದೆ.</verse>
				<verse number="17">ಮಬ್ಬಾಯಿತು ಕಣ್ಣು ವ್ಯರ್ಥವಾಗಿ ನೆರವನ್ನು ನಿರೀಕ್ಷಿಸುತ ರಕ್ಷಿಸಲಾಗದ ರಾಷ್ಟ್ರಕ್ಕಾಗಿ ಕೋವರದಲ್ಲಿ ಕಾದು ನೋಡುತ.</verse>
				<verse number="18">ಶತ್ರು ನಮ್ಮನ್ನು ಹೆಜ್ಜೆಹೆಜ್ಜೆಗೂ ಹುಡುಕುತ್ತಿದ್ದುದರಿಂದ ಹಾದಿಬೀದಿಗಳಲ್ಲಿ ಸಂಚಾರಮಾಡಲೂ ಆಗುತ್ತಿರಲಿಲ್ಲ. ನಮಗೆ ಕಾಲವು ತೀರಿತು, ಅಂತ್ಯವು ಸಮೀಪಿಸಿತು; ಹೌದು, ನಮ್ಮ ಅಂತ್ಯವು ಬಂದೇಬಿಟ್ಟಿತು!</verse>
				<verse number="19">ಹದ್ದುಗಳ ವೇಗದಿಂದ ಹಿಂದಟ್ಟಿಬಂದರು ನಮ್ಮನ್ನು ಬೆನ್ನಟ್ಟಿ ಬೆಟ್ಟಗಳನ್ನೇರಿದರು ಅರಣ್ಯಗಳಲ್ಲಿ ನಮಗಾಗಿ ಹೊಂಚುಹಾಕಿದರು.</verse>
				<verse number="20">ಯಾವನನ್ನು ಕುರಿತು ನಾವು: “ನಮ್ಮ ಬಾಳಿನ ಉಸಿರು, ದೇವರಿಂದ ಅಭಿಷಿಕ್ತನು, ಇವನ ಆಶ್ರಯದಿಂದಲೆ ರಾಷ್ಟ್ರಗಳ ನಡುವೆ ನಮಗೆ ಉಳಿವು” ಎಂದುಕೊಂಡೆವೋ ಅಂಥವನೇ ಸಿಕ್ಕಿಬಿದ್ದಿದ್ದಾನೆ ಹಗೆಗಳು ತೋಡಿದ ಗುಳಿಯೊಳಗೆ!</verse>
				<verse number="21">‘ಊಚ’ ಮತ್ತು ‘ಎದೋಮ್’ ನಾರೀಮಣಿಗಳೇ, ಸಂತೋಷಿಸಿ ಉಲ್ಲಾಸಿಸುತ್ತಿರುವಿರಿ ಅಲ್ಲವೇ? ಆದರೆ ಖಂಡಿತ ಬರುವುದು ಕಹಿಪಾನದ ಪಾತ್ರೆ ನಿಮ್ಮ ಪಾಲಿಗೆ ಅಮಲೇರಿ ಬೆತ್ತಲೆಯಾಗುವ ಗತಿ ಬಂದೇಬರುವುದು ನಿಮಗೆ!</verse>
				<verse number="22">‘ಸಿಯೋನ್’ ನಾರಿಮಣಿಯೇ, ನಿನ್ನ ದೋಷದ ಫಲವನ್ನು ಅನುಭವಿಸಿ ಆಗಿದೆ. ಸರ್ವೇಶ್ವರನು ಮತ್ತೆ ಒಯ್ಯನು ನಿನ್ನನ್ನು ಸೆರೆಗೆ. ‘ಎದೋಮ್’ ನಾರಿಮಣಿಯೇ, ನಿನ್ನ ದೋಷದ ನಿಮಿತ್ತ ಸರ್ವೇಶ್ವರನು ನಿನ್ನನ್ನು ದಂಡಿಸುವನು ನಿನ್ನ ಪಾಪಾಕ್ರಮಗಳನ್ನು ಬಯಲಿಗೆ ಎಳೆಯುವನು.</verse>
			</chapter>
			<chapter number="5">
				<verse number="1">ಹೇ, ಸರ್ವೇಶ್ವರಾ, ನಮಗೊದಗಿರುವ ದುರ್ಗತಿಯನ್ನು ನೆನೆಸಿಕೊ ನಾವು ಸಹಿಸುತ್ತಿರುವ ನಿಂದೆ ಅವಮಾನಗಳನ್ನು ಗಮನಕ್ಕೆ ತಂದುಕೋ.</verse>
				<verse number="2">ನಮ್ಮ ಆಸ್ತಿಪಾಸ್ತಿ ಪರರಪಾಲಾಗಿದೆ ನಮ್ಮ ಮನೆಮಾರುಗಳು ಹೆರವರ ವಶದಲ್ಲಿವೆ.</verse>
				<verse number="3">ನಾವು ತಂದೆಯಿಲ್ಲದ ಅನಾಥರು ನಮ್ಮ ತಾಯಿಗಳು ವಿಧವೆಯರು.</verse>
				<verse number="4">ನೀರು ನಮ್ಮದಾದರೂ ಕೊಂಡುಕೊಂಡು ಕುಡಿಯುತ್ತಿದ್ದೇವೆ ಸೌದೆ ಸ್ವಂತವಾದರೂ ಕ್ರಯಕ್ಕೆ ತೆಗೆದುಕೊಳ್ಳುತ್ತಿದ್ದೇವೆ.</verse>
				<verse number="5">ಹಿಂದಟ್ಟಿ ಬಂದವರು ಹಿಡಿದರು ನಮ್ಮ ಕುತ್ತಿಗೆ ಬಳಲಿ ಬೆಂಡಾಗಿದ್ದೇವೆ ವಿಶ್ರಾಂತಿಯಿಲ್ಲದೆ.</verse>
				<verse number="6">ಹೊಟ್ಟೆಪಾಡಿಗಾಗಿ ಕೈ ಒಡ್ಡಿದ್ದೇವೆ ಈಜಿಪ್ಟರಿಗೆ, ಅಶ್ಶೂರ್ಯರಿಗೆ.</verse>
				<verse number="7">ನಮ್ಮ ಪಿತೃಗಳು ಪಾಪಮಾಡಿ ಗತಿಸಿಹೋದರು ಅವರ ದೋಷಫಲವನ್ನು ನಾವು ಸವಿಯಬೇಕಾಗಿ ಬಂದಿತು.</verse>
				<verse number="8">ದಾಸರುಗಳೇ ನಮಗೆ ದಣಿಗಳಾದರು ಅವರಿಂದ ನಮ್ಮನ್ನು ಬಿಡಿಸುವವರಾರೂ ಇಲ್ಲವಾದರು!</verse>
				<verse number="9">ಪ್ರಾಣಾಪಾಯದಿಂದ, ಕಾಡಿನ ಕಟುಕರ ಭಯದಿಂದ ನಾವು ಪಡೆಯುತ್ತಿದ್ದೇವೆ ದವಸ ಧಾನ್ಯ.</verse>
				<verse number="10">ಒಲೆಯಂತೆ ಸುಡುತ್ತಿದೆ ನಮ್ಮ ಚರ್ಮ ಕ್ಷಾಮಕಾಲದ ಭೀಕರ ಜ್ವರದ ನಿಮಿತ್ತ.</verse>
				<verse number="11">ಅತ್ಯಾಚಾರ ನಡೆದಿದೆ ಸಿಯೋನ್ ಸತಿಯರ ಮೇಲೆ ಯೆಹೂದ ಊರುಗಳ ಯುವತಿಯರ ಮೇಲೆ!</verse>
				<verse number="12">ನಮ್ಮ ನಾಯಕರ ಕೈಗಳನ್ನು ನೇತುಹಾಕಿದ್ದಾರೆ ಗಲ್ಲಿಗೆ ನಮ್ಮ ಹಿರಿಯರನ್ನು ಗುರಿಪಡಿಸಿದ್ದಾರೆ ಮಾನಭಂಗಕ್ಕೆ.</verse>
				<verse number="13">ನಮ್ಮ ಯುವಕರಿಗೆ ಬೀಸುವ ಕಲ್ಲು ಹಿಡಿವ ಗತಿ ನಮ್ಮ ಮಕ್ಕಳಿಗೆ ಸೌದೆ ಹೊತ್ತು ಮುಗ್ಗರಿಸುವ ಪರಿಸ್ಥಿತಿ.</verse>
				<verse number="14">ಮುದುಕರು ಇನ್ನು ಕೂರುತ್ತಿಲ್ಲ ಚಾವಡಿಗಳಲಿ ಯುವಕರು ಇನ್ನು ಹಿಡಿಯುತ್ತಿಲ್ಲ ವಾದ್ಯಗಳನ್ನು ಕೈಯಲ್ಲಿ.</verse>
				<verse number="15">ಸಂತೋಷವು ನಮ್ಮ ಹೃದಯದಿಂದ ಮಾಯವಾಗಿದೆ ನಮ್ಮ ನಾಟ್ಯನಲಿವು ದುಃಖಕರವಾಗಿ ಮಾರ್ಪಟ್ಟಿದೆ.</verse>
				<verse number="16">ನಮ್ಮ ಕಿರೀಟ ಬಿದ್ದುಹೋಗಿದೆ ತಲೆಮೇಲಿಂದ ಈ ಕೇಡೆಲ್ಲಾ ಬಂದೊದಗಿದೆ ನಮ್ಮ ಪಾಪದ ನಿಮಿತ್ತ.</verse>
				<verse number="17">ಈ ಕಾರಣ, ನಮ್ಮ ಹೃದಯ ಕುಂದಿದೆ ಇದೇ ಕಾರಣ, ನಮ್ಮ ಕಣ್ಣು ಮೊಬ್ಬಾಗಿದೆ.</verse>
				<verse number="18">ಸಿಯೋನ್ ಶ್ರೀ ಪರ್ವತ ಹಾಳಾಯಿತು ಅದು ಅಲೆದಾಡುವ ನರಿಗಳ ಬೀಡಾಯಿತು.</verse>
				<verse number="19">ಹೇ ಸರ್ವೇಶ್ವರಾ, ನಿನ್ನ ರಾಜ್ಯ ಚಿರಕಾಲ ನಿನ್ನ ಸಿಂಹಾಸನ ತಲತಲಾಂತರಕ್ಕೂ ಸುಸ್ಥಿರ!</verse>
				<verse number="20">ನಮ್ಮನ್ನೇಕೆ ಮರೆತುಬಿಟ್ಟೆ ಇಷ್ಟುಕಾಲ ನಮ್ಮನ್ನೇಕೆ ಕೈಬಿಟ್ಟೆ ಇಲ್ಲಿಯ ತನಕ?</verse>
				<verse number="21">ಹೇ ಸರ್ವೇಶ್ವರಾ, ನಮ್ಮ ಮೇಲೆ ನೀ ಬಲು ಸಿಟ್ಟುಗೊಂಡಿರುವೆಯೋ? ಬಹುಶಃ ನಮ್ಮನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರುವೆಯೋ?</verse>
				<verse number="22">ತಿರುಗಿಸು ನಮ್ಮನ್ನು ನಿನ್ನ ಕಡೆಗೆ ತಿರುಗುವೆವು ನೀನು ತಿರುಗಿಸಿದ ಹಾಗೆ. ಪ್ರಾಚೀನ ವೈಭವವನ್ನು ಮರಳಿ ದಯಪಾಲಿಸು ನಮಗೆ.</verse>
			</chapter>
		</book>
		<book number="26">
			<chapter number="1">
				<verse number="1">ಮೂವತ್ತನೆಯ ವರ್ಷದ ನಾಲ್ಕನೆಯ ತಿಂಗಳಿನ ಐದನೆಯ ದಿನ ನಾನು ಗಡೀಪಾರಾಗಿದ್ದ ಯೆಹೂದ್ಯರ ಮಧ್ಯೆ ಕೆಬಾರ್ ನದಿಯ ಹತ್ತಿರ ಇದ್ದೆ. ಆಗ ಆಕಾಶ ತೆರೆಯಿತು. ನನಗೆ ದೇವದರ್ಶನಗಳಾದವು.</verse>
				<verse number="2">ಅದೇ ತಿಂಗಳಿನ ಐದನೆಯ ದಿನ, ಅಂದರೆ, ಯೆಹೋಯಾಖೀನನು ಸೆರೆಯಾದ ಐದನೆಯ ವರ್ಷ,</verse>
				<verse number="3">ಬಾಬಿಲೋನಿಯಾ ದೇಶದ ಕೇಬಾರ್ ನದಿಯ ಹತ್ತಿರ, ಬೂಜಿಯ ಮಗ ಹಾಗೂ ಯಾಜಕನಾದ ಯೆಜೆಕಿಯೇಲ ಎಂಬ ನನಗೆ ಸರ್ವೇಶ್ವರ ಸ್ವಾಮಿಯ ವಾಣಿ ನೇರವಾಗಿ ಕೇಳಿಸಿತು; ಅವರ ಹಸ್ತಸ್ಪರ್ಶದಿಂದ ನಾನು ಪರವಶನಾದೆ.</verse>
				<verse number="4">ನಾನು ಕಂಡ ದರ್ಶನ ಹೀಗಿತ್ತು: ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿ ಬೀಸಿತು. ಎಡೆಬಿಡದೆ ಝಗಝಗಿಸುವ ಜ್ವಾಲೆಯಿಂದ ಕೂಡಿದ ಮಹಾ ಮೇಘವೊಂದು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು. ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿ ಬೆಳಗಿತು.</verse>
				<verse number="5">ಅದರ ಮಧ್ಯೆದಿಂದ ನಾಲ್ಕು ಜೀವಿಗಳ ಆಕಾರಗಳು ಕಂಡುಬಂದವು. ಅವುಗಳ ರೂಪ ಮನುಷ್ಯರೂಪದಂತಿತ್ತು.</verse>
				<verse number="6">ಒಂದೊಂದಕ್ಕೆ ನಾಲ್ಕು ಮುಖಗಳು, ನಾಲ್ಕು ರೆಕ್ಕೆಗಳು ಇದ್ದವು.</verse>
				<verse number="7">ಇವುಗಳ ಕಾಲು ನೆಟ್ಟಗಿದ್ದವು; ಪಾದಗಳು ಕರುವಿನ ಗೊರಸಿನಂತೆ ಇದ್ದವು; ಬೆಳಗಿದ ಕಂಚಿನಂತೆ ಮಿನುಮಿನುಗುತ್ತಿದ್ದವು.</verse>
				<verse number="8">ಒಂದೊಂದು ಜೀವಿಯ ನಾಲ್ಕು ಪಾರ್ಶ್ವಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯ ಹಸ್ತದಂಥ ಹಸ್ತಗಳಿದ್ದವು. ಆ ನಾಲ್ಕು ಜೀವಿಗಳ ಮುಖಗಳೂ ರೆಕ್ಕೆಗಳೂ ಹೇಗಿದ್ದವೆಂದರೆ -</verse>
				<verse number="9">ರೆಕ್ಕೆಗಳು ಒಂದಕ್ಕೊಂದು ತಗಲುತ್ತಿದ್ದವು; ಆ ಜೀವಿಗಳು ಹಿಂತಿರುಗಿ ನೋಡದೆ ಹೊರಟ ಮುಖವಾಗಿಯೇ ಹೋಗುತ್ತಿದ್ದವು.</verse>
				<verse number="10">ಅವುಗಳ ಮುಖ ಲಕ್ಷಣಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖ ಮನುಷ್ಯ ಮುಖದಂತಿತ್ತು; ಬಲಗಡೆಯ ಮುಖ ಸಿಂಹನಂತಿತ್ತು; ಎಡಗಡೆಯ ಮುಖ ಹೋರಿಯ ಮುಖದಂತಿತ್ತು; ಹಿಂದಿನ ಮುಖ ಗರುಡ ಪಕ್ಷಿಯ ಮುಖದಂತಿತ್ತು.</verse>
				<verse number="11">ಅವುಗಳ ರೆಕ್ಕೆಗಳು ಮೇಲಕ್ಕೆ ಹರಡಿಕೊಂಡಿದ್ದವು. ಒಂದೊಂದು ಜೀವಿಯ ಎರಡು ರೆಕ್ಕೆಗಳು ಪಕ್ಕದ ಜೀವಿಗಳ ರೆಕ್ಕಗಳಿಗೆ ತಗುಲುತ್ತಿದ್ದವು. ಇನ್ನೆರಡು ರೆಕ್ಕೆಗಳು ದೇಹವನ್ನು ಮುಚ್ಚಿಕೊಂಡಿದ್ದವು.</verse>
				<verse number="12">ಆ ಜೀವಿಗಳೆಲ್ಲ ಹೊರಟ ಮುಖವಾಗಿಯೇ ಹೋಗುತ್ತಿದ್ದವು; ಹಿಂದಿರುಗಿನೋಡದೆ, ದೇವರಾತ್ಮ ಸಾಗಿಸಿದ ಕಡೆಗೇ ಸಾಗುತ್ತಿದ್ದವು.</verse>
				<verse number="13">ಆ ಜೀವಿಗಳ ಮಧ್ಯೆ ಅದ್ಭುತಕಾಂತಿಯೊಂದು ಉರಿಯುವ ಕೆಂಡಗಳೋ ಪಂಜುಗಳೋ ಎಂಬಂತೆ ಕಾಣಿಸಿತು. ಅದು ಆ ಜೀವಿಗಳ ನಡುವೆ ಓಲಾಡುತ್ತಿತ್ತು; ಆ ಉರಿ ತೇಜೋಮಯವಾಗಿತ್ತು. ಅದರೊಳಗಿಂದ ಮಿಂಚುಗಳು ಹೊರಡುತ್ತಿದ್ದವು.</verse>
				<verse number="14">ಆ ಜೀವಿಗಳು ಮಿಂಚಿನಂತೆ ಮುಂದಕ್ಕೂ ಹಿಂದಕ್ಕೂ ಸರಿದಾಡುತ್ತಿದ್ದವು.</verse>
				<verse number="15">ಇಗೋ, ನಾನು ಆ ಜೀವಿಗಳನ್ನು ನೋಡುತ್ತಿದ್ದಂತೆ ಒಂದೊಂದು ಕಡೆಯಲ್ಲೂ ಆ ಜೀವಿಗಳ ಪಕ್ಕದಲ್ಲಿ ನೆಲಸೋಕುವ ಚಕ್ರಗಳು ಕಾಣಿಸಿದವು.</verse>
				<verse number="16">ಆ ಚಕ್ರಗಳ ವರ್ಣರಚನೆ ಹೇಗಿತ್ತೆಂದರೆ: ಅವುಗಳ ವರ್ಣ ಪೀತರತ್ನದ ಹಾಗೆ ಥಳಥಳಿಸುತ್ತಿತ್ತು. ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು; ಆ ನಾಲ್ಕು ಚಕ್ರಗಳು ಒಂದೇ ಮಾದರಿಯಾಗಿದ್ದವು.</verse>
				<verse number="17">ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು. ಓರೆಯಾಗಿ ಹೊರಳುತ್ತಿರಲಿಲ್ಲ.</verse>
				<verse number="18">ಗಾಲಿಗಳ ಸುತ್ತಣ ಭಾಗಗಳು ಎತ್ತರವಾಗಿಯೂ ಭಯಂಕರವಾಗಿಯೂ ಇದ್ದವು; ಈ ಭಾಗಗಳ ಎಲ್ಲಾ ಕಡೆಯಲ್ಲೂ ಅನೇಕಾನೇಕ ಮಿನುಗು ಕಣ್ಣುಗಳಿದ್ದವು;</verse>
				<verse number="19">ಜೀವಿಗಳು ಮುಂದರಿಯುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಮುಂದುವರಿಯುತ್ತಿದ್ದವು; ಜೀವಿಗಳು ನೆಲದಿಂದ ಮೇಲಕ್ಕೇಳುವಾಗ ಚಕ್ರಗಳೂ ಏಳುತ್ತಿದ್ದವು;</verse>
				<verse number="20">ದೇವರಾತ್ಮವು ಸಾಗಿಸಿದ ಕಡೆಗೇ ಅವು ಸಾಗುತ್ತಿದ್ದವು. ಆ ಜೀವಿಗಳಲ್ಲಿದ್ದ ಆತ್ಮವು ಚಕ್ರಗಳಲ್ಲಿಯೂ ಇದ್ದ ಕಾರಣ ಚಕ್ರಗಳು ಅವುಗಳ ಪಕ್ಕದಲ್ಲಿ ಏಳುತ್ತಿದ್ದವು.</verse>
				<verse number="21">ಆ ಜೀವಿಗಳು ಮುಂದುವರಿಯುವಾಗ ಚಕ್ರಗಳೂ ಮುಂದುವರಿಯುತ್ತಿದ್ದವು, ಅವು ನಿಂತುಹೋಗುವಾಗ ಇವೂ ನಿಂತುಹೋಗುತ್ತಿದ್ದವು. ಅವು ನೆಲದಿಂದ ಮೇಲಕ್ಕೆ ಏಳುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಏಳುತ್ತಿದ್ದವು; ಏಕೆಂದರೆ ಆ ಜೀವಿಗಳ ಆತ್ಮ ಚಕ್ರಗಳಲ್ಲಿಯೂ ಇತ್ತು.</verse>
				<verse number="22">ಮಂಜುಗಡ್ಡೆಯಂತೆ ಥಳಥಳಿಸುವ ಒಂದು ತೆರೆದ ಆಶ್ಚರ್ಯಕರವಾದ ಗವಿಯಾಕೃತಿ ಆ ಜೀವಿಗಳ ತಲೆಯ ಮೇಲ್ಗಡೆ ಇತ್ತು.</verse>
				<verse number="23">ಅದರ ಕೆಳಗೆ ಆ ಜೀವಿಗಳ ರೆಕ್ಕೆಗಳು ಮಟ್ಟಸವಾಗಿ ಚಾಚಲ್ಪಟ್ಟು ಒಂದಕ್ಕೊಂದು ತಗಲುತ್ತಿದ್ದವು; ಇದಲ್ಲದೆ ಒಂದೊಂದು ಜೀವಿಗೆ ದೇಹವನ್ನು ಮುಚ್ಚಿಕೊಳ್ಳುವ ಎರಡೆರಡು ರೆಕ್ಕೆಗಳಿದ್ದವು.</verse>
				<verse number="24">ಅವು ಮುಂದುವರಿಯುವಾಗ ಅವುಗಳ ರೆಕ್ಕೆಗಳ ಶಬ್ದವು ಜಲಪ್ರವಾಹದ ಘೋಷದಂತೆ, ಸರ್ವಶಕ್ತನ ಧ್ವನಿಯಂತೆ, ಆರ್ಭಟಿಸುವ ಸೈನ್ಯದ ಕೋಲಾಹಲದಂತೆ ನನಗೆ ಕೇಳಿಸಿತು; ಅವು ನಿಂತಾಗ ರೆಕ್ಕೆಗಳನ್ನು ಮುದುರಿಕೊಳ್ಳುತ್ತಿದ್ದವು.</verse>
				<verse number="25">ಅವುಗಳ ತಲೆಗಳ ಮೇಲ್ಗಡೆಯ ಗವಿಯಾಕೃತಿಯ ಮೇಲಿಂದ ಒಂದು ಧ್ವನಿ ನನ್ನ ಕಿವಿಗೆ ಬಿತ್ತು.</verse>
				<verse number="26">ಅವುಗಳ ತಲೆಗಳ ಮೇಲ್ಗಡೆಯ ಗವಿಯಾಕೃತಿಯ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರನ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.</verse>
				<verse number="27">ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ, ಬೆಂಕಿಯು ಆ ರೂಪದೊಳಗೆಲ್ಲಾ ಪ್ರಜ್ವಲಿಸುತ್ತದೋ ಎಂಬಂತಿರುವ ಅದ್ಭುತ ಕಾಂತಿಯನ್ನು ನಾನು ಕಂಡೆ; ಸೊಂಟದ ಹಾಗೆ ತೋರುವ ಆತನ ಮಧ್ಯಭಾಗದಿಂದ ಕೆಳಗಡೆ ಬೆಂಕಿ ಉರಿಯುತ್ತದೋ ಎಂಬಂತಿರುವ ಮಹಾ ತೇಜಸ್ಸನ್ನು ನೋಡಿದೆ; ಪ್ರಕಾಶವು ಆತನನ್ನು ಆವರಿಸಿಕೊಂಡಿತ್ತು.</verse>
				<verse number="28">ಮಳೆಗಾಲದಲ್ಲಿ ಮೇಘಮಂಡಲದೊಳಗೆ ಕಾಮನ ಬಿಲ್ಲು ಹೊಳೆಯುವಂತೆ ಆತನ ಸುತ್ತಲು ಪ್ರಕಾಶ ಹೊಳೆಯುತ್ತಿತ್ತು. ಹೀಗೆ ಸರ್ವೇಶ್ವರನ ಮಹಿಮಾದ್ಭುತ ದರ್ಶನವು ಆಯಿತು. ಇದನ್ನು ಕಂಡು ನಾನು ಅಡ್ಡಬಿದ್ದೆ; ಮಾತಾಡುವಾತನ ವಾಣಿಯನ್ನು ಕೇಳಿದೆ.</verse>
			</chapter>
			<chapter number="2">
				<verse number="1">ಸರ್ವೇಶ್ವರ ನನಗೆ, “ನರಪುತ್ರನೇ, ಎದ್ದು ನಿಲ್ಲು; ನಿನ್ನ ಸಂಗಡ ಮಾತಾಡಬೇಕು,” ಎಂದು ಹೇಳಿದರು.</verse>
				<verse number="2">ಅವರು ಈ ಮಾತನ್ನು ಹೇಳಿದ ಕೂಡಲೆ ದೇವರಾತ್ಮ ನನ್ನೊಳಗೆ ಸೇರಿ ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು; ಆಗ ನನ್ನೊಡನೆ ಮಾತಾಡಿದಾತನ ನುಡಿಯನ್ನು ಚೆನ್ನಾಗಿ ಕೇಳಿದೆ.</verse>
				<verse number="3">ಅವರು ನನಗೆ ಹೀಗೆ ಹೇಳಿದರು, “ನರಪುತ್ರನೇ, ನನಗೆ ವಿಮುಖರಾಗಿ ದ್ರೋಹಮಾಡಿದ ಜನಾಂಗದವರಾದ ಇಸ್ರಯೇಲರ ಬಳಿಗೆ ನಿನ್ನನ್ನು ಕಳುಹಿಸುವೆನು; ಈ ದಿನದವರೆಗೆ ಅವರೂ ಅವರ ಪಿತೃಗಳೂ ನನ್ನನ್ನು ಪ್ರತಿಭಟಿಸುತ್ತಲೇ ಬಂದಿದ್ದಾರೆ.</verse>
				<verse number="4">ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ ಹಟಗಾರರೂ ಆಗಿದ್ದಾರೆ; ನೀನು ಅವರಿಗೆ, ‘ಸರ್ವೇಶ್ವರನಾದ ದೇವರೇ ಇಂತೆನ್ನುತ್ತಾರೆ,’ ಎಂದು ನುಡಿ.</verse>
				<verse number="5">ಅವರು ದ್ರೋಹಿ ವಂಶದವರು, ಒಂದು ವೇಳೆ ಕೇಳದೆ ಹೋಗಬಹುದು; ಕೇಳಿದರೂ ಕೇಳದೆ ಹೋದರೂ ಒಬ್ಬ ಪ್ರವಾದಿ ತಮ್ಮ ಮಧ್ಯೆ ಕಾಣಿಸಿಕೊಂಡಿದ್ದಾನೆಂದು ತಿಳಿದುಕೊಳ್ಳುವರು.</verse>
				<verse number="6">“ನರಪುತ್ರನೇ, ನೀನು ಮುಳ್ಳುಪೊದೆಗಳಲ್ಲಿ ಸಿಕ್ಕಿಕೊಂಡು ಚೇಳುಗಳ ನಡುವೆ ವಾಸಿಸುವಂತೆ ಅವರ ಮಧ್ಯೆ ಇದ್ದರೂ ಅವರಿಗೆ ಭಯಪಡಬೇಡ. ಅವರ ಗದರಿಕೆಗೆ ಹೆದರದಿರು; ಅವರು ದ್ರೋಹಿ ವಂಶದವರು; ಅವರ ಬಿರುನುಡಿಗೆ ದಿಗಿಲು ಪಡಬೇಡ, ಅವರ ಬಿರುನೋಟಕ್ಕೆ ಬೆಚ್ಚದಿರು.</verse>
				<verse number="7">ಅವರು ಕೇಳಲಿ ಅಥವಾ ಬಿಡಲಿ ನೀನು ನನ್ನ ವಾಕ್ಯವನ್ನು ಅವರಿಗೆ ನುಡಿಯಲೇಬೇಕು. ಅವರು ದ್ರೋಹಿಗಳೇ ಸರಿ.</verse>
				<verse number="8">“ನರಪುತ್ರನೇ, ನಾನು ನಿನಗೆ ನುಡಿಯುವ ಮಾತನ್ನು ಕೇಳು: ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿತೆರೆದು ತಿಂದುಬಿಡು,” ಎಂದರು.</verse>
				<verse number="9">ಇಗೋ, ನಾನು ನೋಡುತ್ತಿದ್ದಂತೆ ಒಂದು ಕೈ ನನ್ನ ಕಡೆಗೆ ಚಾಚಿತ್ತು; ಅದರಲ್ಲಿ ಗ್ರಂಥದ ಸುರುಳಿಯೊಂದು ಕಾಣಿಸಿತು.</verse>
				<verse number="10">ಆ ಸುರುಳಿಯನ್ನು ನನ್ನೆದುರಿನಲ್ಲೆ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಬರೆದಿತ್ತು: ಅದು ಪ್ರಲಾಪ, ಶೋಕ, ಶಾಪ ಇವುಗಳ ಬರಹದಿಂದ ಕೂಡಿತ್ತು.</verse>
			</chapter>
			<chapter number="3">
				<verse number="1">ಬಳಿಕ ಸರ್ವೇಶ್ವರ ನನಗೆ, “ನರಪುತ್ರನೇ, ನಿನಗೆ ಕೊಟ್ಟ ಈ ಸುರುಳಿಯನ್ನು ತಿನ್ನು; ಅನಂತರ ಇಸ್ರಯೇಲ್ ವಂಶದವರಿಗೆ ಸಾರು, ಹೋಗು,” ಎಂದು ಆಜ್ಞಾಪಿಸಿದರು.</verse>
				<verse number="2">ನಾನು ಬಾಯಿ ತೆರೆದೆ; ಅವರೇ ಆ ಸುರುಳಿಯನ್ನು ನನಗೆ ತಿನ್ನಿಸಿದರು.</verse>
				<verse number="3">ತಿನ್ನಿಸುತ್ತಾ, “ನರಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ,” ಎಂದರು. ನಾನು ಅದನ್ನು ತಿಂದುಬಿಟ್ಟೆ; ಅದು ನನ್ನ ಬಾಯಿಗೆ ಜೇನಿನಂತೆ ಸಿಹಿಯಾಗಿತ್ತು.</verse>
				<verse number="4">ಆಮೇಲೆ ಸರ್ವೇಶ್ವರ ನನಗೆ ಹೀಗೆಂದರು: “ನರಪುತ್ರನೇ, ನೀನು ಇಸ್ರಯೇಲ್ ವಂಶದವರ ಬಳಿಗೆ ಹೋಗಿ ನಾನು ತಿಳಿಸುವ ಮಾತುಗಳನ್ನು ಅವರಿಗೆ ಹೇಳು.</verse>
				<verse number="5">ನಾನು ನಿನ್ನನ್ನು ಇಸ್ರಯೇಲ್ ವಂಶದವರ ಬಳಿಗೆ ಕಳುಹಿಸುತ್ತೇನೆಯೇ ಹೊರತು ಕಷ್ಟಕರವಾದ ಅನ್ಯಭಾಷೆಯನ್ನಾಡುವ ಜನರ ಬಳಿಗೆ ಕಳುಹಿಸುತ್ತಿಲ್ಲ;</verse>
				<verse number="6">ಹೌದು, ನಿನಗೆ ಅರ್ಥವಾಗದ ಕಷ್ಟಕರವಾದ ಅನ್ಯಭಾಷೆಯನ್ನಾಡುವ ನಾನಾ ಜನಾಂಗಗಳ ಕಡೆಗೆ ಕಳುಹಿಸುತ್ತಿಲ್ಲ. ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ ಪಕ್ಷದಲ್ಲಿ ಅವರಾದರೂ ನಿಶ್ಚಯವಾಗಿ ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.</verse>
				<verse number="7">ಇಸ್ರಯೇಲ್ ವಂಶದವರೋ ನಿನಗೆ ಕಿವಿಗೊಡಲು ಸಿದ್ಧರಿಲ್ಲ; ನನಗೂ ಕಿವಿಗೊಡಲು ಸಿದ್ಧರಿಲ್ಲ; ಅವರೆಲ್ಲರು ಗರ್ವಿಗಳು ಹಾಗೂ ಹಟಮಾರಿಗಳು.</verse>
				<verse number="8">ಇಗೋ, ಅವರ ಕಠಿಣ ಹೃದಯಕ್ಕೆ ವಿರುದ್ಧ ನಿನ್ನ ಹೃದಯವನ್ನು ಕಠಿಣಪಡಿಸಿದ್ದೇನೆ; ಅವರ ಹಟಮಾರಿತನಕ್ಕೆ ಪ್ರತಿಯಾಗಿ ನಿನ್ನನ್ನು ಹಟವಾದಿಯನ್ನಾಗಿ ಮಾಡಿದ್ದೇನೆ.</verse>
				<verse number="9">ನಿನ್ನ ನಿರ್ಧಾರವನ್ನು ಕಗ್ಗಲ್ಲಿಗಿಂತ ಕಠಿಣವಾದ ವಜ್ರದಷ್ಟು ಕಠಿಣಪಡಿಸಿದ್ದೇನೆ; ಅವರು ದ್ರೋಹಿ ವಂಶದವರು, ಅವರಿಗೆ ಭಯಪಡಬೇಡ; ಅವರ ಬಿರುನೋಟಕ್ಕೆ ಬೆಚ್ಚದಿರು.”</verse>
				<verse number="10">ಇದಲ್ಲದೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ನಾನು ನಿನಗೆ ನುಡಿಯುವ, ಮಾತುಗಳನ್ನೆಲ್ಲಾ ಕಿವಿಯಿಂದ ಕೇಳಿ ಮನಸ್ಸಿನಲ್ಲಿಟ್ಟುಕೋ.</verse>
				<verse number="11">ಸೆರೆಯಾಗಿರುವ ನಿನ್ನ ಸ್ವಜನರ ಬಳಿಗೆಹೋಗಿ ಅವರು ಕೇಳಲಿ ಅಥವಾ ಕೇಳದೆಹೋಗಲಿ ಅವರನ್ನು ಪ್ರಭೋಧಿಸು; ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ,’ ಎಂದು ಅವರಿಗೆ ಸಾರಿಹೇಳು.”</verse>
				<verse number="12">ಆಮೇಲೆ ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. “ಮಹಿಮಾಭರಿತ ಸರ್ವೇಶ್ವರ ಸ್ವಾಮಿಗೆ ಆತನಾಲಯದಲ್ಲಿ ಸ್ತೋತ್ರ; ಸ್ತೋತ್ರ;” ಎಂಬ ಮಹಾಶಬ್ದ ನನ್ನ ಹಿಂದೆ ಭರಭರನೆ ಕೇಳಿಸಿತು.</verse>
				<verse number="13">ಆ ಜೀವಿಗಳ ರೆಕ್ಕೆಗಳು ಒಂದಕ್ಕೊಂದು ಬಡಿದಾಡುವ ಸಪ್ಪಳ, ಅವುಗಳ ಪಕ್ಕದಲ್ಲಿ ಗರಗರನೆ ತಿರುಗುವ ಚಕ್ರಗಳ ಸದ್ದು ಹೀಗೆ ಭೂಕಂಪದಂಥ ಮಹಾಶಬ್ದ ನನ್ನ ಕಿವಿಗೆ ಬಿತ್ತು.</verse>
				<verse number="14">ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. ಸರ್ವೇಶ್ವರನ ಹಸ್ತಸ್ಪರ್ಶದಿಂದ ನಾನು ಅತಿ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ಮುನ್ನಡೆದೆ.</verse>
				<verse number="15">ಅನಂತರ ಕೆಬಾರ್ ನದಿಯ ಹತ್ತಿರ ತೇಲ್ ಅಬೀಬ್‍ನಲ್ಲಿ ವಾಸವಾಗಿದ್ದ ಗಡೀಪಾರಾಗಿ ಸೆರೆಯಾಳುಗಳಾಗಿದ್ದವರ ಬಳಿಗೆ ಬಂದೆ. ಅವರು ಕೂತಿದ್ದ ಸ್ಥಳದಲ್ಲಿಯೇ ಕುಳಿತುಕೊಂಡೆ; ಏಳು ದಿವಸ ಅಲ್ಲೇ ಅವರ ಮಧ್ಯದಲ್ಲಿ ಸ್ತಬ್ದನಾಗಿ ಇದ್ದುಬಿಟ್ಟೆ.</verse>
				<verse number="16">ಏಳು ದಿವಸಗಳಾದ ಮೇಲೆ ಸರ್ವೇಶ್ವರ ನನಗೆ ಅನುಗ್ರಹಿಸಿದ ವಾಣಿ ಇದು:</verse>
				<verse number="17">“ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.</verse>
				<verse number="18">ನಾನು ದುಷ್ಟನಿಗೆ, “ನೀನು ಖಂಡಿತವಾಗಿ ಸಾಯುವೆ,” ಎಂದು ನುಡಿಯುವಾಗ ನೀನು ಅವನನ್ನು ಎಚ್ಚರಿಸದೆ ಹಾಗು ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳುವಂತೆ ಅವನಿಗೆ ಬುದ್ಧಿಹೇಳದೆ ಇದ್ದರೆ, ಆ ದುಷ್ಟನು ತನ್ನ ಅಪರಾಧಕ್ಕಾಗಿ ಸಾಯಬೇಕಾಗುವುದು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.</verse>
				<verse number="19">ನೀನು ಆ ದುಷ್ಟನನ್ನು ಎಚ್ಚರಿಸಿದರೂ ಅವನು ತನ್ನ ದುಷ್ಟತನವನ್ನೂ ದುರ್ಮಾರ್ಗವನ್ನೂ ಬಿಡದೆಹೋದರೆ ತನ್ನ ಅಪರಾಧಕ್ಕಾಗಿ ಸಾಯುವನು; ನೀನಾದರೋ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.</verse>
				<verse number="20">ಇದಲ್ಲದೆ, ಸಜ್ಜನನೊಬ್ಬನು ತನ್ನ ಸನ್ನಡತೆಯನ್ನು ಬಿಟ್ಟು ಅಧರ್ಮಮಾಡುವಲ್ಲಿ, ನಾನು ಅವನ ಮುಂದೆ ಒಡ್ಡುವ ಆತಂಕವನ್ನು ಎಡವಿ ಅವನು ಸತ್ತೇ ಸಾಯುವನು; ನೀನು ಅವನನ್ನು ಎಚ್ಚರಿಸದೆಹೋದ ಕಾರಣ ಅವನು ತನ್ನ ಪಾಪದಿಂದ ಸಾಯಬೇಕಾಯಿತು. ಅವನು ಮಾಡಿದ ಸುಕೃತ್ಯಗಳು ಲೆಕ್ಕಕ್ಕೆಬಾರವು; ಅವನ ಮರಣಕ್ಕೆ ನೀನೆ ಹೊಣೆಯಾಗುವೆ.</verse>
				<verse number="21">ನೀನು ಆ ಸಜ್ಜನನನ್ನು ಪಾಪಮಾಡದಂತೆ ಎಚ್ಚರಿಸಿದ ಮೇಲೆ ಅವನು ಪಾಪಮಾಡದೆ ಎಚ್ಚರಗೊಂಡರೆ ಈ ಕಾರಣ ಜೀವದಿಂದ ಉಳಿಯುವನು; ನೀನೂ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.”</verse>
				<verse number="22">ಅದೇ ಸ್ಥಳದಲ್ಲಿ ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾದೆ. ಆಗ ಅವರು ನನಗೆ, “ನೀನೆದ್ದು ಬಯಲುಪ್ರದೇಶಕ್ಕೆ ಹೊರಡು, ಅಲ್ಲಿ ನಾನು ನಿನ್ನೊಂದಿಗೆ ಮಾತಾಡುವೆನು,” ಎಂದು ಹೇಳಿದರು.</verse>
				<verse number="23">ನಾನೆದ್ದು ಬಯಲು ಪ್ರದೇಶಕ್ಕೆ ಹೊರಟುಬಂದಾಗ, ಕೆಬಾರ್ ನದಿಯ ಹತ್ತಿರ ನನಗೆ ಮಹಿಮಾದ್ಭುತ ದರ್ಶನವು ಆದಂತೆ, ಇಗೋ ಅಲ್ಲಿಯೂ ಸರ್ವೇಶ್ವರನ ಮಹಿಮೆ ಪ್ರತ್ಯಕ್ಷವಾಯಿತು. ಅದನ್ನು ನೋಡಿ ಅಡ್ಡಬಿದ್ದೆ.</verse>
				<verse number="24">ದೇವರಾತ್ಮ ನನ್ನೊಳಗೆ ಹೊಕ್ಕು ನಾನು ಎದ್ದು ನಿಂತುಕೊಳ್ಳುವಂತೆ ಮಾಡಿತು. ಆಮೇಲೆ ಅವರು ನನಗೆ ಹೀಗೆ ಹೇಳಿದರು: ನೀನು ಹೋಗಿ ನಿನ್ನ ಮನೆಯೊಳಗೆ ಅಡಗಿಕೋ.</verse>
				<verse number="25">ನರಪುತ್ರನೇ, ಇಗೋ, ನಿನ್ನ ಸ್ವಜನರೇ ನಿನ್ನನ್ನು ಕಟ್ಟಿ ಬಂಧಿಸುವರು. ನೀನು ಅವರ ಮಧ್ಯೆ ಅತ್ತಿತ್ತ ಸಂಚರಿಸದಿರುವೆ.</verse>
				<verse number="26">ಇದಲ್ಲದೆ, ನಿನ್ನ ನಾಲಿಗೆ ಸೇದಿಹೋಗಿ ನೀನು ಮೂಕನಾಗಿರುವಂತೆ ಮಾಡುವೆನು; ದ್ರೋಹಿವಂಶದವರಾದ ಅವರನ್ನು ನೀನು ಖಂಡಿಸಲು ಸಾಧ್ಯವಾಗದು.</verse>
				<verse number="27">ನಾನು ನಿನ್ನೊಡನೆ ಮತ್ತೆ ಮಾತಾಡುವಾಗ ನಿನ್ನ ಬಾಯನ್ನು ಬಿಚ್ಚುವೆನು; ಆಗ ನೀನು ಅವರಿಗೆ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ’ ಎಂದು ನುಡಿಯಬೇಕು; ಕೇಳುವವನು ಕೇಳಲಿ, ಕೇಳದವನು ಬಿಡಲಿ; ಏಕೆಂದರೆ ಅವರು ದ್ರೋಹಿವಂಶದವರೇ.</verse>
			</chapter>
			<chapter number="4">
				<verse number="1">“ನರಪುತ್ರನೇ, ನೀನು ಒಂದು ಚದರ ಇಟ್ಟಿಗೆಯನ್ನು ತೆಗೆದುಕೊಂಡು ನಿನ್ನ ಮುಂದೆ ಇಟ್ಟು ಅದರಲ್ಲಿ ಪಟ್ಟಣದ ನಕ್ಷೆಯನ್ನು ಅಂದರೆ, ಜೆರುಸಲೇಮಿನ ನಕ್ಷೆಯನ್ನು ಬರೆ.</verse>
				<verse number="2">ಆ ನಕ್ಷೆಯ ಸುತ್ತಲು ದಿಬ್ಬಹಾಕಿ, ಒಡ್ಡುಕಟ್ಟಿ, ಪಾಳೆಯಗಳನ್ನು ಮಾಡಿ, ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ, ಅದನ್ನು ಮುತ್ತು.</verse>
				<verse number="3">ಆಮೇಲೆ ಕಬ್ಬಿಣದ ಹೆಂಚನ್ನು ತೆಗೆದುಕೊಂಡು ಅದನ್ನು ನಿನಗೂ ಆ ಪಟ್ಟಣಕ್ಕೂ ಮಧ್ಯೆ ಕಬ್ಬಿಣದ ಗೋಡೆಯನ್ನಾಗಿ ನಿಲ್ಲಿಸಿ ಆ ಪಟ್ಟಣದ ಮೇಲೆ ದೃಷ್ಟಿಯಿಡು; ಅದು ಮುತ್ತಲ್ಪಡುವುದು. ನೀನು ಅದನ್ನು ಮುತ್ತಿದಂತಾಗುವುದು. ಇದು ಇಸ್ರಯೇಲ್ ವಂಶದವರಿಗೆ ಒಂದು ಸಂಕೇತ.</verse>
				<verse number="4">“ಇದಲ್ಲದೆ ನೀನು ನಿನ್ನ ಎಡಮಗ್ಗುಲಲ್ಲಿ ಮಲಗು. ಇಸ್ರಯೇಲ್ ವಂಶದವರ ಅಧರ್ಮದ ಭಾರ ನಿನ್ನ ಮೇಲೆ ಬಿದ್ದಿದೆ ಎಂದು ಗೊತ್ತಾಗಲಿ; ನೀನು ಎಷ್ಟು ದಿವಸ ಹೀಗೆ ಮಲಗಿಕೊಂಡಿರುವಿಯೋ ಅಷ್ಟು ದಿವಸ ಅವರ ಅಧರ್ಮವನ್ನು ಹೊತ್ತುಕೊಂಡಿರುವೆ.</verse>
				<verse number="5">ಅವರು ಎಷ್ಟು ವರ್ಷ ತಮ್ಮ ಅಧರ್ಮದ ಫಲವನ್ನು ಅನುಭವಿಸಬೇಕೋ ಅಷ್ಟು ದಿವಸ ಅಂದರೆ, ಮುನ್ನೂರತೊಂಬತ್ತು ದಿವಸ ನೀನು ಮಲಗಿಕೊಂಡಿರಬೇಕೆಂದು ನಿನಗೆ ನೇಮಿಸಿದ್ದೇನೆ; ಅಷ್ಟು ದಿವಸ ಇಸ್ರಯೇಲ್ ವಂಶದವರ ಅಧರ್ಮವನ್ನು ನೀನು ಹೊತ್ತುಕೊಂಡಿರಬೇಕು.</verse>
				<verse number="6">ಅಷ್ಟು ದಿವಸಗಳು ತೀರಿದ ಮೇಲೆ ಬಲಮಗ್ಗುಲಲ್ಲಿ ಮಲಗಿಕೊಂಡು ಯೆಹೂದ ವಂಶದವರ ಅಧರ್ಮವನ್ನು ಹೊತ್ತುಕೊಳ್ಳಬೇಕು. ವರ್ಷ ಒಂದಕ್ಕೆ ಒಂದು ದಿವಸ ಮೇರೆಗೆ ನಲವತ್ತು ದಿನ ಅವರ ಅಧರ್ಮವನ್ನು ಹೊತ್ತುಕೊಳ್ಳಬೇಕೆಂದು ನಿನಗೆ ಗೊತ್ತುಮಾಡಿದ್ದೇನೆ.</verse>
				<verse number="7">“ನಿನ್ನ ತೋಳಿಗೆ ಹೊದಿಕೆಯಿಲ್ಲದೆ, ಮುತ್ತಿಗೆಯಾದ ಜೆರುಸಲೇಮಿನ ಕಡೆಗೆ ಮೋರೆ ತಿರುಗಿಸಿ, ಅದರ ವಿರುದ್ಧ ಅಶುಭವನ್ನು ಪ್ರವಾದಿಸು.</verse>
				<verse number="8">ಇಗೋ, ನಿನ್ನ ಮುತ್ತಿಗೆಯ ದಿನಗಳು ಮುಗಿಯುವ ತನಕ ನೀನು ಬಲಮಗ್ಗುಲಿಂದ ಎಡಮಗ್ಗುಲಿಗೆ ಹೊರಳದಂತೆ ನಿನ್ನನ್ನು ಬಂಧಿಸುವೆನು.</verse>
				<verse number="9">“ಇದಲ್ಲದೆ ನೀನು ಗೋದಿ, ಜವೆಗೋದಿ, ಅವರೆ, ಅಲಸಂದೆ, ಸಾವೆ, ಕಡಲೆ ಇವುಗಳನ್ನು ತೆಗೆದುಕೊಂಡು ಒಂದೇ ಪಾತ್ರೆಯಲ್ಲಿ ಹಾಕಿ ಅವುಗಳಿಂದ ರೊಟ್ಟಿಯನ್ನು ಮಾಡಿಕೋ; ಮಗ್ಗುಲಲ್ಲಿ ಮಲಗಿಕೊಳ್ಳುವಷ್ಟು ದಿನ, ಅಂದರೆ ಮುನ್ನೂರ ತೊಂಬತ್ತು ದಿನ ಅದನ್ನು ತಿನ್ನು.</verse>
				<verse number="10">ನಿನ್ನ ಆಹಾರದ ತೂಕ ದಿನವೊಂದಕ್ಕೆ 230 ಗ್ರಾಂ ಇರಲಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ತಿನ್ನಬೇಕು.</verse>
				<verse number="11">ಮತ್ತು ನೀರನ್ನು ಅಳತೆಯ ಪ್ರಕಾರ ದಿನವೊಂದಕ್ಕೆ ಎರಡು ಬಟ್ಟಲಂತೆ ಕುಡಿ; ಆಗಾಗ್ಗೆ ಸ್ವಲ್ಪ ಸ್ವಲ್ಪ ಕುಡಿಯಬೇಕು.</verse>
				<verse number="12">ನೀನು ಸೌದೆಗೆ ಬದಲಾಗಿ ಮನುಷ್ಯನ ಮಲವನ್ನು ಉರಿಸಿ, ನಿನ್ನ ಜನರ ಕಣ್ಣೆದುರಿಗೆ ಆ ಹಿಟ್ಟನ್ನು ರೊಟ್ಟಿಮಾಡಿ ಜವೆಗೋದಿಯ ರೊಟ್ಟಿಗಳಂತೆ ತಿನ್ನು.</verse>
				<verse number="13">“ಹಾಗೆಯೇ ಇಸ್ರಯೇಲ್ ವಂಶದವರು ನನ್ನಿಂದ ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಆ ದೇಶೀಯರ ನಡುವೆ ವಾಸಿಸುತ್ತಾ ತಮ್ಮ ಆಹಾರವನ್ನು ಹೊಲಸಾಗಿ ತಿನ್ನುವರು; ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="14">ಅದಕ್ಕೆ ನಾನು, “ಅಯ್ಯೋ, ದೇವರಾದ ಸರ್ವೇಶ್ವರ ನಾನು ಹೊಲಸನ್ನು ಮುಟ್ಟಿದವನಲ್ಲ, ನಾನು ಹುಟ್ಟಿದಂದಿನಿಂದ ಇಂದಿನವರೆಗೂ ಸತ್ತ ಪಶುವಿನ ಮಾಂಸವನ್ನಾಗಲಿ, ಕಾಡುಮೃಗ ಕೊಂದ ಪಶುವಿನ ಮಾಂಸವನ್ನಾಗಲಿ ತಿಂದವನೇ ಅಲ್ಲ; ಯಾವ ಅಸಹ್ಯಪದಾರ್ಥವೂ ನನ್ನ ಬಾಯೊಳಗೆ ಸೇರಲಿಲ್ಲ,” ಎಂದು ಅರಿಕೆಮಾಡಿದೆ.</verse>
				<verse number="15">ಅದಕ್ಕೆ ಅವರು, “ನೋಡು, ಮನುಷ್ಯರ ಮಲಕ್ಕೆ ಬದಲಾಗಿ ದನಗಳ ಸಗಣಿಯನ್ನು ನಿನಗೆ ಗೊತ್ತುಮಾಡಿದ್ದೇನೆ. ಇದನ್ನು ಉರಿಸಿ ನಿನ್ನ ರೊಟ್ಟಿಯನ್ನು ಸುಟ್ಟುಕೋ,” ಎಂದು ಉತ್ತರಕೊಟ್ಟರು.</verse>
				<verse number="16">ಇದಲ್ಲದೆ ಅವರು ನನಗೆ ಹೀಗೆ ಹೇಳಿದರು: “ನರಪುತ್ರನೇ, ನಾನು ಜೆರುಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕಮಾಡಿ ಅಂಜಿಕೆಯಿಂದ ತಿನ್ನುವರು, ನೀರನ್ನು ಅಳತೆಮಾಡಿ ಕಳವಳದಿಂದ ಕುಡಿಯುವರು;</verse>
				<verse number="17">ಅವರಲ್ಲಿ ಪ್ರತಿಯೊಬ್ಬರು ಅನ್ನನೀರಿನ ಕೊರತೆಯಿಂದ ಕುಗ್ಗಿಹೋಗಿ ತಮ್ಮ ಅಧರ್ಮದಿಂದ ಕ್ಷಯಿಸಿಹೋಗುವರು.”</verse>
			</chapter>
			<chapter number="5">
				<verse number="1">“ನರಪುತ್ರನೇ, ಹರಿತವಾದ ಖಡ್ಗವನ್ನು ತೆಗೆದುಕೊಂಡು, ಕ್ಷೌರಿಕನ ಕತ್ತಿಯನ್ನಾಗಿ ಉಪಯೋಗಿಸಿ ನಿನ್ನ ತಲೆಯನ್ನೂ ಗಡ್ಡವನ್ನೂ ಬೋಳಿಸಿಬಿಡು; ತಕ್ಕಡಿಯನ್ನು ತಂದು ತೂಗಿ ಆ ಕೂದಲನ್ನು ಸರಿಯಾಗಿ ಮೂರು ಭಾಗಮಾಡು.</verse>
				<verse number="2">ಮುತ್ತಿಗೆಯ ದಿನಗಳು ಮುಗಿದ ಕೂಡಲೆ ಕೂದಲಿನ ಒಂದು ಭಾಗವನ್ನು ಪಟ್ಟಣದ ಮಧ್ಯೆ ಬೆಂಕಿಯಲ್ಲಿ ಸುಡು; ಇನ್ನೊಂದು ಭಾಗವನ್ನು ತೆಗೆದುಕೊಂಡು ಪಟ್ಟಣದ ಸುತ್ತಲು ಖಡ್ಗದಿಂದ ಕಡಿ; ಮತ್ತೊಂದು ಭಾಗವನ್ನು ಗಾಳಿಗೆ ತೂರಿಬಿಡು; (ಈ ಪ್ರಕಾರ ನಾನು ನನ್ನ ಜನರ ಹಿಂದೆ ಕತ್ತಿಯನ್ನು ಬೀಸುವೆನು).</verse>
				<verse number="3">ಈ ಕಡೆಯ ಭಾಗದಲ್ಲಿ ಉಳಿಸಿಕೊಂಡ ಕೆಲವು ಕೂದಲನ್ನು ನಿನ್ನ ಮೇಲಂಗಿಯ ಅಂಚಿನಲ್ಲಿ ಕಟ್ಟು;</verse>
				<verse number="4">ಆಮೇಲೆ ಇವುಗಳಲ್ಲಿ ಕೆಲವನ್ನು ಆರಿಸಿ ಬೆಂಕಿಯಲ್ಲಿ ಹಾಕಿ ಸುಡು; ಅವುಗಳಿಂದ ಬೆಂಕಿ ಹೊರಟು ಇಸ್ರಯೇಲ್ ವಂಶವನ್ನೆಲ್ಲಾ ವ್ಯಾಪಿಸುವುದು.”</verse>
				<verse number="5">ಸರ್ವೇಶ್ವರನಾದ ದೇವರು ಹೀಗೆಂದರು: “ನಾನಾ ದೇಶಗಳ ನಡುವೆ, ನಾನಾ ಜನಾಂಗಗಳ ಮಧ್ಯೆ ನಾನು ಸ್ಥಾಪಿಸಿದ ಜೆರುಸಲೇಮ್ ಪಟ್ಟಣ ಈ ಮನೆ.</verse>
				<verse number="6">ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಇತರ ಜನಾಂಗಗಳಿಗಿಂತಲೂ ಸುತ್ತಲಿನ ದೇಶಗಳಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮವನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.</verse>
				<verse number="7">ಹೀಗಿರಲು ಸರ್ವೇಶ್ವರ ಸ್ವಾಮಿಯಾದ ನಾನು ಹೇಳುವುದಿದು: ‘ನೀವು ನನ್ನ ನಿಯಮಗಳನ್ನು ಅನುಸರಿಸದೆ, ನನ್ನ ವಿಧಿಗಳನ್ನು ಕೈಗೊಳ್ಳದೆ, ನಿಮ್ಮ ಸುತ್ತಲಿನ ಜನಾಂಗಗಳ ಧರ್ಮವಿಧಿಗಳನ್ನು ಆಚರಿಸಿ, ಆ ಜನಾಂಗಗಳಿಗಿಂತ ಹೆಚ್ಚು ದಂಗೆಕೋರರಾಗಿ ವರ್ತಿಸಿದ್ದೀರಿ.</verse>
				<verse number="8">ಆದುದರಿಂದ ಜೆರುಸಲೇಮೇ, ಇಗೋ, ನಾನೇ ನಿನಗೆ ವಿರುದ್ಧವಾಗಿದ್ದೇನೆ. ಜನಾಂಗಗಳ ಕಣ್ಣೆದುರಿಗೆ ನಿನ್ನ ಜನರನ್ನು ದಂಡಿಸುವೆನು; ಇದು ಸರ್ವೇಶ್ವರನಾದ ನನ್ನ ನುಡಿ.</verse>
				<verse number="9">ನೀನು ಬಹಳ ಅಸಹ್ಯಕೃತ್ಯಗಳಲ್ಲಿ ತೊಡಗಿದ್ದರಿಂದ ನಾನು ಈವರೆಗೂ ಇನ್ನು ಮುಂದಕ್ಕೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು.</verse>
				<verse number="10">ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.’</verse>
				<verse number="11">“ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷಮಿಸೆನು.</verse>
				<verse number="12">ನಿನ್ನಲ್ಲಿನ ಮೂರನೆಯ ಒಂದು ಭಾಗದ ಜನರು ವ್ಯಾಧಿಯಿಂದ ಸಾಯುವರು, ನಿನ್ನ ಮಧ್ಯದಲ್ಲೆ ಕ್ಷಾಮದಿಂದ ನಾಶವಾಗುವರು; ಇನ್ನೊಂದು ಭಾಗದವರು ನಿನ್ನ ಸುತ್ತಲು ಖಡ್ಗದಿಂದ ಹತರಾಗುವರು; ಮತ್ತೊಂದು ಭಾಗದವರನ್ನು ನಾನು ಎಲ್ಲಾ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.</verse>
				<verse number="13">“ಹೀಗೆ ನನ್ನ ಸಿಟ್ಟನ್ನು ತೀರಿಸಿಕೊಳ್ಳುವೆನು, ನನ್ನ ರೋಷವನ್ನು ಅವರ ಮೇಲೆ ಕಾರಿ ಶಾಂತನಾಗುವೆನು; ಆಗ್ರಹದಿಂದ ಮಾತಾಡಿದವನು ಸರ್ವೇಶ್ವರನಾದ ನಾನೇ ಎಂಬುದು ನನ್ನ ಕೋಪವನ್ನು ಅವರ ಮೇಲೆ ಹೊಯ್ದುಬಿಟ್ಟ ಬಳಿಕ ಅವರಿಗೆ ಗೊತ್ತಾಗುವುದು.</verse>
				<verse number="14">ಹಾದುಹೋಗುವವರೆಲ್ಲರ ಕಣ್ಣೆದುರಿಗೆ ನಾನು ನಿನ್ನನ್ನು ಹಾಳುಮಾಡಿ ಸುತ್ತಲಿನ ಜನಾಂಗಗಳ ನಿಂದೆಗೆ ಗುರಿಮಾಡುವೆನು.</verse>
				<verse number="15">“ನಾನು ಕೋಪದಿಂದ, ರೋಷದಿಂದ ಹಾಗು ತೀವ್ರ ಖಂಡನೆಯಿಂದ ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ ಪರಿಹಾಸ್ಯಗಳಿಗೂ ಬೆರಗು ಬುದ್ಧಿವಾದಗಳಿಗೂ ಆಸ್ಪದವಾಗುವುವು; ಇದು ಸರ್ವೇಶ್ವರನಾದ ನನ್ನ ನುಡಿ.</verse>
				<verse number="16">ಆಗ ನಾನು ನಿನ್ನನ್ನು ಹಾಳುಮಾಡಲು ಕ್ಷಾಮವೆಂಬ ವಿನಾಶಕರವಾದ ತೀಕ್ಷ್ಣಬಾಣಗಳನ್ನು ನಿನ್ನ ಮೇಲೆ ಬಿಡುವನು. ನಿನ್ನನ್ನು ಬರದಿಂದ ಬಹಳವಾಗಿ ಬಾಧಿಸಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.</verse>
				<verse number="17">ನಾನು ಕಳುಹಿಸುವ ಕ್ಷಾಮದಿಂದ, ದುಷ್ಟಮೃಗಗಳಿಂದ ನಿನಗೆ ಪುತ್ರಶೋಕ ಪ್ರಾಪ್ತಿಯಾಗುವುದು; ವ್ಯಾಧಿಯೂ ರಕ್ತಪ್ರವಾಹವೂ ನಿನ್ನನ್ನು ಪೀಡಿಸುವುದು; ನಿನ್ನನ್ನು ಖಡ್ಗಕ್ಕೆ ತುತ್ತುಮಾಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.”</verse>
			</chapter>
			<chapter number="6">
				<verse number="1">ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ವಾಣಿ ಇದು:</verse>
				<verse number="2">“ನರಪುತ್ರನೇ, ಇಸ್ರಯೇಲಿನ ಬೆಟ್ಟಗಳಿಗೆ ಅಭಿಮುಖನಾಗಿ ನಿಂತು ಅವುಗಳನ್ನು ಕುರಿತು ಈ ದೈವೋಕ್ತಿಯನ್ನು ನುಡಿ,</verse>
				<verse number="3">‘ಇಸ್ರಯೇಲಿನ ಬೆಟ್ಟಗಳೇ, ಸರ್ವೇಶ್ವರನಾದ ದೇವರ ಈ ಮಾತನ್ನು ಕೇಳಿರಿ; ಸರ್ವೇಶ್ವರನಾದ ದೇವರು ಬೆಟ್ಟಗುಡ್ಡಗಳಿಗೂ ತೊರೆತಗ್ಗುಗಳಿಗೂ ಹೀಗೆ ಹೇಳುತ್ತಾರೆ: ಇಗೋ, ನಾನೇ ನಿಮ್ಮ ಮೇಲೆ ಖಡ್ಗವನ್ನು ಬರಮಾಡಿ ನಿಮ್ಮ ಪೂಜಾಸ್ಥಳಗಳನ್ನು ನಾಶಪಡಿಸುವೆನು.</verse>
				<verse number="4">ನಿಮ್ಮ ಯಜ್ಞವೇದಿಗಳು ಹಾಳಾಗುವುವು. ನಿಮ್ಮ ಸೂರ್ಯಸ್ತಂಭಗಳು ಚೂರುಚೂರಾಗುವುವು. ನಿಮ್ಮವರು ನಿಮ್ಮ ಬೊಂಬೆಗಳ ಮುಂದೆ ಹತರಾಗಿ ಬೀಳುವಂತೆ ಮಾಡುವೆನು.</verse>
				<verse number="5">ನಾನು ಇಸ್ರಯೇಲರ ಹೆಣಗಳನ್ನು ಅವರ ಬೊಂಬೆಗಳ ಮುಂದೆ ಬಿಸಾಡಿ ನಿಮ್ಮ ಯಜ್ಞವೇದಿಗಳ ಸುತ್ತಲು ನಿಮ್ಮ ಎಲುಬುಗಳನ್ನು ಎರಚಿಬಿಡುವೆನು.</verse>
				<verse number="6">ನೀವು ವಾಸಿಸುವ ದೇಶದಲ್ಲೆಲ್ಲಾ ಊರುಗಳು ಹಾಳಾಗುವುವು; ಪೂಜಾಸ್ಥಳಗಳು ಪಾಳುಬೀಳುವುವು; ಇದರಿಂದ ನಿಮ್ಮ ಯಜ್ಞವೇದಿಕೆಗಳು ಹಾಳುಪಾಳಾಗುವುವು; ನಿಮ್ಮ ಬೊಂಬೆಗಳು ಪುಡಿಪುಡಿಯಾಗುವುವು; ನಿಮ್ಮ ಸೂರ್ಯಸ್ತಂಭಗಳು ಚೂರುಚೂರಾಗುವುವು; ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು;</verse>
				<verse number="7">ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.</verse>
				<verse number="8">ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.</verse>
				<verse number="9">ಹೀಗೆ ಅಳಿದುಳಿದು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನು ಹಾಗು ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹ ಮಾಡಿದ ತಮ್ಮ ಕಣ್ಣುಗಳನ್ನು ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.</verse>
				<verse number="10">ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.”</verse>
				<verse number="11">ಸರ್ವೇಶ್ವರನಾದ ದೇವರು ನುಡಿದದ್ದು: “ನೀನು ಚಪ್ಪಾಳೆ ಹೊಡೆದು ನೆಲವನ್ನೊದ್ದು ಹೀಗೆ ಹೇಳು, ‘ಅಕಟಾ, ಇಸ್ರಯೇಲ್ ವಂಶದವರ ಅಸಹ್ಯವಾದ ಕೆಟ್ಟಕೆಲಸಗಳೆಷ್ಟು! ಅವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸತ್ತೇ ಸಾಯುವರು.</verse>
				<verse number="12">ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು, ಹತ್ತಿರದಲ್ಲಿರುವವನು ಖಡ್ಗದಿಂದ ಸಾಯುವನು; ಅಂತು ನಾನು ಅವರ ಮೇಲೆ ಇಟ್ಟಿರುವ ರೋಷವನ್ನು ತೀರಿಸಿಬಿಡುವೆನು.</verse>
				<verse number="13">ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೆ, ಎಲ್ಲಾ ಬೆಟ್ಟಗಳ ತುದಿಗಳಲ್ಲಿ, ಸೊಂಪಾದ ಎಲ್ಲಾ ಮರಗಳ ಕೆಳಗೆ ಹಾಗು ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಮರಗಳ ಕೆಳಗೆ ಹತರಾಗಿ, ತಮ್ಮ ಯಜ್ಞವೇದಿಕೆಗಳ ಸುತ್ತಲು ತಮ್ಮ ಬೊಂಬೆಗಳ ನಡುವೆ ಬಿದ್ದಿರುವಾಗ ನಾನೇ ಸರ್ವೇಶ್ವರ ಎಂದು ಗೊತ್ತಾಗುವುದು.</verse>
				<verse number="14">ನಾನು ಅವರ ವಿರುದ್ಧ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಬದವರೆಗೂ ಹಾಳುಪಾಳು ಮಾಡುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”</verse>
			</chapter>
			<chapter number="7">
				<verse number="1">ಇದಲ್ಲದೆ ಸರ್ವೇಶ್ವರ ಅನುಗ್ರಹಿಸಿದ ಈ ವಾಣಿ ನನಗೆ ಕೇಳಿಸಿತು:</verse>
				<verse number="2">“ನರಪುತ್ರನೇ, ಸರ್ವೇಶ್ವರನಾದ ದೇವರು ಇಸ್ರಯೇಲ್ ನಾಡಿಗೆ ಹೀಗೆ ನುಡಿಯುತ್ತಾರೆ: ‘ಪ್ರಳಯ, ಪೂರ್ಣಪ್ರಳಯ ನಾಡಿನ ಚತುರ್ದಿಕ್ಕಿನಲ್ಲೂ ಸಂಭವಿಸಿದೆ.’</verse>
				<verse number="3">“ಈಗಲೇ ನಿನಗೆ ಪ್ರಳಯ ಬಂದುಬಿಟ್ಟಿತು; ನಾನು ನನ್ನ ಕೋಪವನ್ನು ನಿನ್ನ ಮೇಲೆ ಬರಮಾಡಿ, ನಿನ್ನ ನಡತೆಗೆ ತಕ್ಕಂತೆ ನ್ಯಾಯತೀರಿಸಿ, ನಿನ್ನ ಸಮಸ್ತ ಅಸಹ್ಯಕಾರ್ಯಗಳ ಫಲವನ್ನು ನಿನಗೆ ಉಣ್ಣಿಸುವೆನು.</verse>
				<verse number="4">ನಿನ್ನನ್ನು ಕಟಾಕ್ಷಿಸೆನು, ಉಳಿಸೆನು; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.”</verse>
				<verse number="5">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಅಯ್ಯೋ, ಕೇಡು, ಎಂದೂ ಕಾಣದ ಕೇಡು, ಇಗೋ ಬಂದಿತು;</verse>
				<verse number="6">ಪ್ರಳಯ ಬಂದಿತು, ಪೂರ್ಣಪ್ರಳಯ ಬಂದಿತು, ನಿನ್ನನ್ನು ಚಚ್ಚುವುದಕ್ಕೆ ಚಚ್ಚರಗೊಂಡಿದೆ, ಇಗೋ ಬಂದೇ ಬಂತು;</verse>
				<verse number="7">ದೇಶನಿವಾಸಿಯೇ, ನಿನ್ನ ಗತಿ ಮುಗಿಯಿತು, ಸಮಯ ಬಂದಿತು, ದಿನ ಸಮೀಪಿಸಿತು; ಬೆಟ್ಟಗಳ ಮೇಲೆ ಕೇಳಿಸುವ ಧ್ವನಿ ಉತ್ಸಾಹಧ್ವನಿಯಲ್ಲ, ಅದು ಬರೀ ಗೋಳೇ!</verse>
				<verse number="8">“ಇನ್ನು ಸ್ವಲ್ಪಕಾಲದೊಳಗೆ ನಾನು ನಿನ್ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸುವೆನು, ನನ್ನ ಕೋಪವನ್ನು ತೀರಿಸಿಕೊಳ್ಳುವೆನು; ನಿನ್ನ ನಡತೆಗೆ ತಕ್ಕ ದಂಡನೆಯನ್ನು ವಿಧಿಸಿ, ನಿನ್ನ ಅಸಹ್ಯಕಾರ್ಯಗಳ ಫಲವನ್ನೆಲ್ಲಾ ನಿನಗೆ ತಿನ್ನಿಸುವೆನು.</verse>
				<verse number="9">ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು. ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಸರ್ವೇಶ್ವರನಾದ ನಾನು ದಂಡಿಸುವವನು ಎಂಬುದು ನಿನಗೆ ಚೆನ್ನಾಗಿ ಗೊತ್ತಾಗುವುದು.</verse>
				<verse number="10">“ಇಗೋ, ದಂಡನೆಯ ದಿನ ಬಂದೆಬಿಟ್ಟಿತು; ನಿನಗೆ ದುರ್ಗತಿ ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆ ಚಿಗುರಿದೆ;</verse>
				<verse number="11">ಹಿಂಸೆ ಬೆಳೆದು ಬೆಳೆದು ಕೆಡುಕಿನ ಕೋಲಾಗಿದೆ; ನಿನ್ನವರಲ್ಲಿ ಯಾರೂ ಉಳಿಯರು. ಆ ಜನಸಮೂಹದಲ್ಲೂ ಅವರ ಆಸ್ತಿಯಲ್ಲೂ ಶೇಷವೇನೂ ಇರದು; ಅವರಲ್ಲಿ ಯಾವ ಶ್ರೇಷ್ಠತೆಯೂ ನಿಲ್ಲದು.</verse>
				<verse number="12">“ಸಮಯ ಬಂದಿದೆ, ದಿನ ಹತ್ತಿರವಾಗಿದೆ; ಕೊಂಡುಕೊಳ್ಳುವವನು ಹರ್ಷಿಸದಿರಲಿ, ಮಾರುವವನು ದುಃಖಿಸದಿರಲಿ; ರೋಷಾಗ್ನಿ ಆ ಸಮೂಹದವರೆಲ್ಲರ ಮೇಲೆ ಹತ್ತಿದೆ.</verse>
				<verse number="13">ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನ ಸಮಾಜದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗರು, ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳರು;</verse>
				<verse number="14">ಅವರು ಕೊಂಬನ್ನೂದಿ ಸರ್ವಸನ್ನಾಹ ಮಾಡಿದರೂ ಯಾರು ಯುದ್ಧಕ್ಕೆ ಹೊರಡರು; ನನ್ನ ರೋಷಾಗ್ನಿ ಆ ಸಮಾಜದವರೆಲ್ಲರ ಮೇಲೆ ಹತ್ತಿದೆ.</verse>
				<verse number="15">“ಊರ ಹೊರಗೆ ಖಡ್ಗಕ್ಕೆ, ಊರೊಳಗೆ ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು; ಹೊರಗಿರುವವರು ಖಡ್ಗದಿಂದ ಸಾಯುವರು.</verse>
				<verse number="16">ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಿಡುತ್ತಿರುವರು.</verse>
				<verse number="17">ಎಲ್ಲರ ಕೈಗಳು ಜೋಲು ಬಿದ್ದಿರುವುವು; ಎಲ್ಲರ ಮೊಣಕಾಲುಗಳು ನೀರಿನಂತೆ ಅದರುವುವು.</verse>
				<verse number="18">ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಆವರಿಸಿಬಿಡುವುದು; ಎಲ್ಲರ ಮುಖದಲ್ಲೂ ನಾಚಿಕೆ ತುಂಬಿರುವುದು, ಎಲ್ಲರು ತಲೆಬೋಳಿಸಿಕೊಂಡು ಇರುವರು.</verse>
				<verse number="19">ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರ ಅಶುದ್ಧ ಪದಾರ್ಥದಂತಿರುವುದು; ಸರ್ವೇಶ್ವರ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರ ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರದು, ಅವರ ಹೊಟ್ಟೆ ತುಂಬದು; ಏಕೆಂದರೆ ಅವರ ಆಸ್ತಿ ಅವರಿಗೆ ಪಾಪಕ್ಕೆ ಕಾರಣವಾಗಿತ್ತು.</verse>
				<verse number="20">“ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು.</verse>
				<verse number="21">ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡುವೆನು. ಅನ್ಯರ ಕೈಯಿಂದ ಕೊಳ್ಳೆ ಹೊಡೆಯಿಸಿ ಲೋಕಕುಖ್ಯಾತ ದುಷ್ಟರಿಂದ ಸೂರೆಮಾಡಿಸುವೆನು; ಅವರು ಅದನ್ನು ಹೊಲೆಗೊಳಿಸುವರು.</verse>
				<verse number="22">ನಾನು ಅವರ ಕಡೆಯಿಂದ ನನ್ನ ಮುಖವನ್ನು ತಿರುಗಿಸಿಕೊಳ್ಳುವೆನು; ಅವರು ನನ್ನ ಪ್ರಿಯ ಮಂದಿರವನ್ನು ಅಪವಿತ್ರಗೊಳಿಸುವರು. ಕಳ್ಳರು ಅದರಲ್ಲಿ ನುಗ್ಗಿ ಅದನ್ನು ಹೊಲೆಗೆಡಿಸುವರು.</verse>
				<verse number="23">“ಒಂದು ಸರಪಣಿಯನ್ನು ಮಾಡು; ಏಕೆಂದರೆ ನಾಡು ನರಹತ್ಯಪೂರಿತವಾಗಿದೆ. ಪಟ್ಟಣವು ಹಿಂಸಾಕೃತ್ಯಗಳಿಂದ ತುಂಬಿಹೋಗಿದೆ.</verse>
				<verse number="24">ಹೀಗಿರಲು ನಾನು ಅತಿ ದುಷ್ಟಜನಾಂಗಗಳನ್ನು ಬರಮಾಡುವೆನು; ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುವು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರಸ್ಥಾನಗಳು ಹೊಲೆಗೆಡುವುವು;</verse>
				<verse number="25">ಸಂಕಟ ಸಂಭವಿಸುವುದು; ಅಲ್ಪಸ್ವಲ್ಪ ಸಮಾಧಾನವನ್ನು ಹುಡುಕಿದರೂ ಸಿಕ್ಕದು.</verse>
				<verse number="26">ಉಪದ್ರವದ ಮೇಲೆ ಉಪದ್ರವ, ಸುದ್ದಿಯ ಮೇಲೆ ಸುದ್ದಿ ಹರಡುವುವು; ‘ದಿವ್ಯದರ್ಶನವಾಯಿತೆ’ ಎಂದು ಪ್ರವಾದಿಯನ್ನು ಕೇಳುತ್ತಲೇ ಇರುವರು; ಯಾಜಕರಲ್ಲಿ ಧರ್ಮೋಪದೇಶ ಅಡಗಿಹೋಗುವುದು, ಹಿರಿಯರಲ್ಲಿ ಸಲಹೆ ಸಮಾಲೋಚನೆ ಇಲ್ಲವಾಗುವುದು.</verse>
				<verse number="27">ರಾಜನು ದುಃಖಿಸುವನು, ದಿಗಿಲು ಒಡೆಯನನ್ನು ಮುಸುಕುವುದು, ಜನಸಾಮಾನ್ಯರ ಕೈಗಳು ತತ್ತರಿಸುವುವು; ನಾನು ಅವರ ದುರ್ನಡತೆಗೆ ತಕ್ಕ ಪ್ರತೀಕಾರವನ್ನು ಮಾಡಿ ಅವರ ದುಷ್ಕರ್ಮಗಳಿಗೆ ಸರಿಯಾದ ದಂಡನೆಯನ್ನು ವಿಧಿಸುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”</verse>
			</chapter>
			<chapter number="8">
				<verse number="1">ಅದು ಆರನೆಯ ವರ್ಷದ ಆರನೆಯ ತಿಂಗಳಿನ ಐದನೆಯ ದಿನ. ನಾನೂ ಯೆಹೂದದ ಹಿರಿಯರೂ ನನ್ನ ಮನೆಯೊಳಗೆ ಎದುರುಬದುರಾಗಿ ಕುಳಿತಿದ್ದೆವು. ಸರ್ವೇಶ್ವರನಾದ ದೇವರ ಹಸ್ತಸ್ಪರ್ಶದಿಂದ ನಾನು ಪರವಶನಾದೆ.</verse>
				<verse number="2">ಇಗೋ, ನಾನು ನೋಡುತ್ತಿದ್ದಂತೆ ಬೆಂಕಿ ಉರಿಯುತ್ತದೋ ಎಂಬಂತೆ ಮನುಷ್ಯಾಕೃತಿಯೊಂದು ನನಗೆ ಕಾಣಿಸಿತು; ಸೊಂಟದ ಹಾಗೆ ತೋರುವ ಅದರ ಮಧ್ಯಭಾಗದಿಂದ ಕೆಳಗಡೆ ಬೆಂಕಿ ಉರಿಯುತ್ತಿತ್ತು; ಅದರ ಮಧ್ಯಭಾಗದಿಂದ ಮೇಲ್ಗಡೆ ಸುವರ್ಣವು ಥಳಥಳಿಸುತ್ತದೋ ಎಂಬಂತೆ ಅದ್ಭುತ ಕಾಂತಿಯೊಂದು ಹೊಳೆಯಿತು.</verse>
				<verse number="3">ಆಗ ಆ ಮನುಷ್ಯಾಕೃತಿ ಮಾನವನ ಹಸ್ತದಂಥ ಹಸ್ತವನ್ನು ಚಾಚಿ ನನ್ನ ಚಂಡಿಕೆಯನ್ನು ಹಿಡಿಯಿತು. ದೇವರಾತ್ಮ ನನ್ನನ್ನು ಎತ್ತಿಕೊಂಡು ಭೂಮ್ಯಾಕಾಶಗಳ ನಡುವೆ ಜೆರುಸಲೇಮಿನವರೆಗೆ ಒಯ್ದಿತು. ಅಲ್ಲಿನ ದೇವಾಲಯದ ಒಳಗಣ ಪ್ರಾಕಾರದ ಉತ್ತರ ಬಾಗಿಲ ಮುಂದೆ, ದೇವರನ್ನು ರೋಷಗೊಳಿಸುವ ವಿಗ್ರಹವು ಮೊದಲಿದ್ದ ಸ್ಥಳದಲ್ಲಿ ನಿಲ್ಲಿಸಿದ ಹಾಗೆ ಆ ದೇವದರ್ಶನದಲ್ಲಿ ನನಗೆ ಕಂಡುಬಂದಿತು.</verse>
				<verse number="4">ಆಗ ಇಗೋ, ಇಸ್ರಯೇಲಿನ ದೇವರ ಮಹಿಮಾದ್ಭುತ ದರ್ಶನವು ಬಯಲುಸೀಮೆಯಲ್ಲಿ ಆದಂತೆ ಇಲ್ಲಿಯೂ ನನಗಾಯಿತು.</verse>
				<verse number="5">ಆಗ ಅವರು ನನಗೆ, “ನರಪುತ್ರನೇ, ಉತ್ತರಕ್ಕೆ ಕಣ್ಣೆತ್ತಿ ನೋಡು,” ಎಂದು ಹೇಳಿದರು; ಅಂತೆಯೇ ನಾನು ಉತ್ತರಕ್ಕೆ ಕಣ್ಣೆತ್ತಿ ನೋಡಿದೆ. ಇಗೋ ದೇವರನ್ನು ರೋಷಗೊಳಿಸುವ ಅದೇ ವಿಗ್ರಹವು ಬಲಿಪೀಠದ ಬಾಗಿಲ ಉತ್ತರದಲ್ಲಿ ಪ್ರವೇಶದ್ವಾರದ ಮುಂದೆ ನಿಂತಿತ್ತು.</verse>
				<verse number="6">ಆಗ ಅವರು ನನಗೆ, “ನರಪುತ್ರನೇ, ಇವರು ಮಾಡುವುದನ್ನು ನೋಡಿದೆಯಾ? ಇಸ್ರಯೇಲ್ ವಂಶದವರು ಇಲ್ಲಿ ನಡೆಸುವ ಅಧಿಕ ದುರಾಚಾರಗಳನ್ನೆಲ್ಲ ಕಂಡೆಯಾ? ಇದರಿಂದ ನಾನು ನನ್ನ ಪವಿತ್ರಾಲಯವನ್ನು ಬಿಟ್ಟು ದೂರಹೋಗಬೇಕಾಯಿತು. ಬಾ, ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ,” ಎಂದು ಹೇಳಿದರು.</verse>
				<verse number="7">ಆಮೇಲೆ ದೇವರು ನನ್ನನ್ನು ಪ್ರಾಕಾರದ ಬಾಗಿಲಿಗೆ ಬರಮಾಡಿದರು; ಇಗೋ, ಆ ಗೋಡೆಯಲ್ಲಿ ಒಂದು ರಂಧ್ರವು ನನಗೆ ಕಾಣಿಸಿತು.</verse>
				<verse number="8">ಆಗ ಅವರು ನನಗೆ, “ನರಪುತ್ರನೇ, ಗೋಡೆಯನ್ನು ತೋಡು,” ಎಂದು ಹೇಳಿದರು. ನಾನು ಗೋಡೆಯನ್ನು ತೋಡಿದೆ. ಆಗ ಇಗೋ, ಒಂದು ಬಾಗಿಲು ಕಾಣಿಸಿತು.</verse>
				<verse number="9">ದೇವರು ನನಗೆ, “ನೀನು ಒಳಹೊಕ್ಕು ಜನರು ಇಲ್ಲಿ ನಡೆಸುವ ಅಸಹ್ಯ ದುಷ್ಕಾರ್ಯಗಳನ್ನು ನೋಡು,” ಎಂದು ಹೇಳಿದರು. ನಾನು ಹೊಕ್ಕು ನೋಡಿದೆ;</verse>
				<verse number="10">ಅಕಟಾ, ಎಲ್ಲಾ ಜಾತಿಯ ಕ್ರಿಮಿಕೀಟಗಳು, ಅಸಹ್ಯ ಮೃಗಗಳು ಹಾಗು ಇಸ್ರಯೇಲ್ ವಂಶದವರು ಪೂಜಿಸುವ ಸಕಲ ಮೂರ್ತಿಗಳು ಆ ಗೋಡೆಯ ಸುತ್ತಲೂ ಚಿತ್ರಿತವಾಗಿದ್ದವು.</verse>
				<verse number="11">ಇಸ್ರಯೇಲ್ ವಂಶದ ಎಪ್ಪತ್ತು ಮಂದಿ ಹಿರಿಯರೂ ಅವರ ಮಧ್ಯದಲ್ಲಿ ಶಾಫಾನನ ಮಗ ಯಾಜನ್ಯನೂ ತಮ್ಮ ತಮ್ಮ ಕೈಗಳಲ್ಲಿ ಧೂಪಾರತಿಗಳನ್ನು ಹಿಡಿದುಕೊಂಡು ಆ ಚಿತ್ರಗಳ ಮುಂದೆ ನಿಂತಿದ್ದರು: ಧೂಪದ ಸುವಾಸನೆಯ ಧೂಮವು ಮೇಘವಾಗಿ ಏರುತ್ತಿತ್ತು.</verse>
				<verse number="12">ಆಗ ದೇವರು ನನಗೆ, “ನರಪುತ್ರನೇ, ಇಸ್ರಯೇಲ್ ವಂಶದ ಹಿರಿಯರೆಲ್ಲರು ನಾನಾ ರೂಪಗಳಿಂದ ಚಿತ್ರಿತವಾದ ತಮ್ಮ ತಮ್ಮ ಕೊಠಡಿಗಳೊಳಗೆ, ಕತ್ತಲೆಯಲ್ಲಿ ನಡೆಸುವ ಕೆಲಸವನ್ನು ನೋಡಿದೆಯಾ? ‘ಸರ್ವೇಶ್ವರ ನಮ್ಮನ್ನು ನೋಡನು, ಸರ್ವೇಶ್ವರ ನಾಡನ್ನು ತೊರೆದುಬಿಟ್ಟಿದ್ದಾನೆ,’ ಎಂದು ಮಾತಾಡಿಕೊಳ್ಳುತ್ತಾರಷ್ಟೆ,” ಎಂಬುದಾಗಿ ಹೇಳಿದರು.</verse>
				<verse number="13">ಆಮೇಲೆ ದೇವರು ನನಗೆ, “ಇವುಗಳಿಗಿಂತ ಇನ್ನು ಹೆಚ್ಚಾದ ದುರಾಚಾರಗಳನ್ನು ನೋಡುವೆ,” ಎಂದು ಹೇಳಿ</verse>
				<verse number="14">ನನ್ನನ್ನು ಸರ್ವೇಶ್ವರನ ಆಲಯದ ಉತ್ತರ ಬಾಗಿಲ ಮುಂದಕ್ಕೆ ಕರೆತಂದರು; ಇಗೋ, ಅಲ್ಲಿ ಹೆಂಗಸರು ‘ತಮ್ಮೂಜ್’ ದೇವತೆಗಾಗಿ ಅಳುತ್ತಾ ಕುಳಿತಿದ್ದರು.</verse>
				<verse number="15">ಇದಾದ ಮೇಲೆ ದೇವರು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ? ಇವುಗಳಿಗಿಂತ ಮತ್ತೂ ಹೆಚ್ಚಾದ ದುರಾಚಾರಗಳನ್ನು ನೋಡುವೆ,” ಎಂದು ಹೇಳಿ</verse>
				<verse number="16">ಸರ್ವೇಶ್ವರನ ಆಲಯದ ಒಳಗಣ ಪ್ರಾಕಾರದೊಳಕ್ಕೆ ನನ್ನನ್ನು ಕರೆದುತಂದರು; ಇಗೋ, ಆ ಆಲಯದ ಬಾಗಿಲ ಮುಂದೆ, ಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಸುಮಾರು ಇಪ್ಪತ್ತೈದು ಜನರು ಸರ್ವೇಶ್ವರನ ಆಲಯಕ್ಕೆ ಬೆನ್ನುಮಾಡಿ ಪೂರ್ವದ ಕಡೆಗೆ ಮುಖಮಾಡಿ ಉದಯಕಾಲದ ಸೂರ್ಯನನ್ನು ಪೂಜಿಸುತ್ತಿದ್ದರು.</verse>
				<verse number="17">ಆಗ ದೇವರು ನನಗೆ, “ನರಪುತ್ರನೇ, ನೋಡಿದೆಯಾ? ಯೆಹೂದವಂಶದವರು ತಾವು ಇಲ್ಲಿ ನಡೆಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿದ್ದಾರೋ? ನಾಡನ್ನು ಹಿಂಸಾಕೃತ್ಯಗಳಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಪತ್ರೆಯನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.</verse>
				<verse number="18">ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು. ಅವರನ್ನು ಕಟಾಕ್ಷಿಸೆನು, ಉಳಿಸೆನು; ಅವರು ನನ್ನ ಕಿವಿಯಲ್ಲಿ ಎಷ್ಟು ಗಟ್ಟಿಯಾಗಿ ಕೂಗಿಕೊಂಡರೂ ನಾನು ಆಲಿಸೆನು.”</verse>
			</chapter>
			<chapter number="9">
				<verse number="1">ಆಮೇಲೆ ದೇವರು, “ಈ ಪಟ್ಟಣವನ್ನು ದಂಡಿಸಲಿರುವವರೇ, ನೀವೆಲ್ಲರೂ ನಿಮ್ಮ ಹತ್ಯದ ಆಯುಧಗಳನ್ನು ಹಿಡಿದು ಸಮೀಪಿಸಿರಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದ ಮಾತು ನನ್ನ ಕಿವಿಗೆ ಬಿತ್ತು.</verse>
				<verse number="2">ಕೂಡಲೆ ಗದೆಗಳನ್ನು ಹಿಡಿದುಕೊಂಡ ಆರುಮಂದಿ ಪುರುಷರು ಉತ್ತರಾಭಿಮುಖವಾಗಿರುವ ಮೇಲಣ ಹೆಬ್ಬಾಗಿಲಿನ ಮಾರ್ಗವಾಗಿ ಬಂದರು; ನಾರಿನ ಬಟ್ಟೆಯನ್ನು ಹೊದ್ದುಕೊಂಡು ಲೇಖಕನ ದೌತಿಯನ್ನು ನಡುವಿಗೆ ಕಟ್ಟಿಕೊಂಡಿರುವ ಮತ್ತೊಬ್ಬ ಪುರುಷನು ಅವರ ಮಧ್ಯದಲ್ಲಿದ್ದನು. ಇವರೆಲ್ಲರೂ ಒಳಕ್ಕೆ ಸೇರಿ ಕಂಚಿನ ಬಲಿಪೀಠದ ಪಕ್ಕದಲ್ಲಿ ನಿಂತುಕೊಂಡರು.</verse>
				<verse number="3">ಇಷ್ಟರಲ್ಲಿ ಇಸ್ರಯೇಲಿನ ದೇವರ ತೇಜಸ್ಸು ತನ್ನ ವಾಹನವಾದ ಕೆರೂಬಿಯನ್ನು ಬಿಟ್ಟು ಮೇಲಕ್ಕೇರಿ ಆಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತ್ತು; ಆಗ ನಾರಿನ ಬಟ್ಟೆಯನ್ನು ಹೊದ್ದುಕೊಂಡು, ಲೇಖಕನ ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನನ್ನು ಸರ್ವೇಶ್ವರ ಕೂಗಿ ಅವನಿಗೆ,</verse>
				<verse number="4">“ನೀನು ಜೆರುಸಲೇಮ್ ಪಟ್ಟಣದಲ್ಲೆಲ್ಲಾ ತಿರುಗಾಡಿ, ಅದರೊಳಗೆ ನಡೆಯುವ ಸಮಸ್ತ ಅಸಹ್ಯಕಾರ್ಯಗಳಿಗೆ ನರಳಿ ಗೋಳಾಡುತ್ತಿರುವ ಜನರ ಹಣೆಯ ಮೇಲೆ ಗುರುತುಮಾಡು,” ಎಂದು ಅಪ್ಪಣೆಕೊಟ್ಟರು.</verse>
				<verse number="5">ಮಿಕ್ಕವರಿಗೆ, “ನೀವು ಪಟ್ಟಣದಲ್ಲೆಲ್ಲಾ ಇವನ ಹಿಂದೆ ಸಂಚರಿಸುತ್ತಾ ಹತಿಸಿರಿ; ಯಾರನ್ನೂ ಕಟಾಕ್ಷಿಸದಿರಿ, ಉಳಿಸದಿರಿ;</verse>
				<verse number="6">ವೃದ್ಧ, ಯುವಕ, ಯುವತಿ, ಮಹಿಳೆ, ಬಾಲಕ ಎನ್ನದೆ ಸಕಲರನ್ನೂ ಸಂಹಾರ ಮಾಡಿಬಿಡಿ; ಆದರೆ ಆ ಗುರುತುಳ್ಳವರಲ್ಲಿ ಯಾರನ್ನೂ ಮುಟ್ಟಬೇಡಿ; ನನ್ನ ಆಲಯದಲ್ಲಿಯೇ ಪ್ರಾರಂಭಮಾಡಿ,” ಎಂದು ನನಗೆ ಕೇಳಿಸುವಂತೆ ಅಪ್ಪಣೆಮಾಡಿದರು. ಆಗ ದೇವಾಲಯದ ಮುಂದೆ ಇದ್ದ ಹಿರಿಯರನ್ನು ಮೊದಲುಗೊಂಡು ಹತಿಸತೊಡಗಿದರು.</verse>
				<verse number="7">ದೇವರು ಅವರಿಗೆ, “ಹೊರಡಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ, ದೇವಾಲಯವನ್ನು ಹೊಲೆಗೆಡಿಸಿ,” ಎಂದು ಅಪ್ಪಣೆಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು.</verse>
				<verse number="8">ಅವರು ಹೊಡೆಯುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಸರ್ವೇಶ್ವರನಾದ ದೇವರೇ, ನೀವು ಜೆರುಸಲೇಮಿನ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿಸಿ ಇಸ್ರಯೇಲಿನ ಶೇಷವನ್ನೆಲ್ಲಾ ನಾಶಮಾಡುವಿರೋ?” ಎಂದು ಮೊರೆಯಿಟ್ಟೆ.</verse>
				<verse number="9">ಆಗ ಅವರು ನನಗೆ, “ಇಸ್ರಯೇಲ್ ಮತ್ತು ಯೆಹೂದ ವಂಶದವರ ಅಧರ್ಮ ತುಂಬಿಹೋಗಿದೆ; ನಾಡು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು, ‘ನಮ್ಮ ನಾಡನ್ನು ಸರ್ವೇಶ್ವರ ತೊರೆದುಬಿಟ್ಟಿದ್ದಾರೆ, ಸರ್ವೇಶ್ವರ ನಮ್ಮನ್ನು ನೋಡುವುದಿಲ್ಲ’ ಎಂದು ಮಾತಾಡಿಕೊಳ್ಳುತ್ತಿದ್ದಾರೆ;</verse>
				<verse number="10">ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.</verse>
				<verse number="11">ಕೂಡಲೆ ನಾರಿನ ಬಟ್ಟೆಯನ್ನು ಹೊದ್ದುಕೊಂಡು ಮಸಿಕೊಂಬನ್ನು ನಡುವಿಗೆ ಕಟ್ಟಿಕೊಂಡಿದ್ದ ಪುರುಷನು, “ನಿಮ್ಮ ಅಪ್ಪಣೆಯಂತೆಯೇ ಮಾಡಿದ್ದೇನೆ,” ಎಂದು ಅರಿಕೆಮಾಡಿದನು.</verse>
			</chapter>
			<chapter number="10">
				<verse number="1">ದೇವದರ್ಶನದಲ್ಲಿ ಇಗೋ, ಕೆರೂಬಿಗಳ ತಲೆಗಳ ಮೇಲಿದ್ದ ಗವಿಯಾಕೃತಿಯ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.</verse>
				<verse number="2">ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಆ ಪುರಷನಿಗೆ ದೇವರು, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ, ಕೆರೂಬಿಯ ಕೆಳಗೆ ಪ್ರವೇಶಿಸಿ, ಕೆರೂಬಿಗಳ ಮಧ್ಯೆಯಿಂದ ಬೊಗಸೆಯಲ್ಲಿ ಕೆಂಡಗಳನ್ನು ತುಂಬಿ ತಂದು ಪಟ್ಟಣದ ಮೇಲೆ ಎರಚು,” ಎಂದು ಅಪ್ಪಣೆಕೊಟ್ಟರು. ಅವನು ನನ್ನ ಕಣ್ಣೆದುರಿಗೇ ಹೋಗಿ ಅಲ್ಲಿ ಪ್ರವೇಶಿಸಿದನು.</verse>
				<verse number="3">ಅವನು ಒಳಗೆ ಸೇರಿದಾಗ ಕೆರೂಬಿಗಳು ದೇವಾಲಯದ ದಕ್ಷಿಣಭಾಗದಲ್ಲಿ ನಿಂತಿದ್ದವು, ಮೇಘವು ಒಳಗಿನ ಆವರಣವನ್ನು ತುಂಬಿತ್ತು.</verse>
				<verse number="4">ಇದಲ್ಲದೆ ಸರ್ವೇಶ್ವರನ ತೇಜಸ್ಸು ಕೆರೂಬಿಗಳನ್ನು ಬಿಟ್ಟು ಮೇಲಕ್ಕೇರಿ ದೇವಾಲಯದ ಹೊಸ್ತಿಲಿನ ಮೇಲ್ಗಡೆ ನಿಂತಿತು; ದೇವಾಲಯದಲ್ಲೂ ಮೇಘವು ತುಂಬಿತ್ತು; ಸರ್ವೇಶ್ವರನ ತೇಜಸ್ಸಿನ ಅದ್ಭುತಕಾಂತಿ ಆವರಣದಲ್ಲೆಲ್ಲಾ ವ್ಯಾಪಿಸಿತ್ತು.</verse>
				<verse number="5">ಆಗ ಕೆರೂಬಿಗಳ ರೆಕ್ಕೆಗಳ ಶಬ್ದ ಸರ್ವಶಕ್ತನಾದ ದೇವರು ಮಾತಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಆವರಣದ ಪರ್ಯಂತವೂ ಕೇಳಿಸಿತು.</verse>
				<verse number="6">ದೇವರು ನಾರಿನ ಬಟ್ಟೆಯನ್ನು ಹೊದ್ದುಕೊಂಡಿದ್ದ ಆ ಪುರುಷನಿಗೆ, “ನೀನು ಗರಗರನೆ ತಿರುಗುವ ಗಾಲಿಗಳ ನಡುವೆ ಪ್ರವೇಶಿಸಿ, ಕೆರೂಬಿಗಳ ಮಧ್ಯೆಯಿಂದ ಬೆಂಕಿಯನ್ನು ತೆಗೆದುಕೋ,” ಎಂದು ಅಪ್ಪಣೆಕೊಟ್ಟರು. ಅವನು ಒಳಕ್ಕೆ ಹೋಗಿ ಒಂದು ಚಕ್ರದ ಪಕ್ಕದಲ್ಲಿ ನಿಂತುಕೊಂಡನು.</verse>
				<verse number="7">ಆಗ ಒಬ್ಬ ಕೆರೂಬಿಯು ಇತರ ಕೆರೂಬಿಯರ ನಡುವೆ ಕೈಚಾಚಿ, ಅವುಗಳ ಮಧ್ಯದಲ್ಲಿದ್ದ ಬೆಂಕಿಯನ್ನು ತೆಗೆದು, ನಾರಿನ ಬಟ್ಟೆತೊಟ್ಟವನ ಬೊಗಸೆಯಲ್ಲಿ ಹಾಕಿತು; ಅವನು ಅದನ್ನು ತೆಗೆದುಕೊಂಡು ಆಚೆಗೆ ಹೊರಟನು.</verse>
				<verse number="8">(ಕೆರೂಬಿಗಳ ಒಂದೊಂದು ರೆಕ್ಕೆಯ ಕೆಳಗೂ ಮನುಷ್ಯಹಸ್ತದಂಥ ಒಂದೊಂದು ಹಸ್ತವು ಕಾಣಿಸಿತು.)</verse>
				<verse number="9">ಇಗೋ, ಆ ಕೆರೂಬಿಗಳ ಪಕ್ಕಗಳಲ್ಲಿ ಒಂದೊಂದು ಕೆರೂಬಿಯ ಪಕ್ಕದಲ್ಲಿ ಒಂದೊಂದು ಚಕ್ರದಂತೆ ನಾಲ್ಕು ಚಕ್ರಗಳಿದ್ದುದು ಕಾಣಿಸಿತು. ಆ ಚಕ್ರಗಳ ಬಣ್ಣ ಪೀತರತ್ನದ ಹಾಗೆ ಹೊಳೆಯುತ್ತಿತ್ತು.</verse>
				<verse number="10">ಅವುಗಳ ರೂಪ ಹೇಗಿತ್ತೆಂದರೆ ಒಂದು‍ ಚಕ್ರದೊಳಗೆ ಇನ್ನೊಂದು ಚಕ್ರ ರಚಿಸಿದಂತಿತ್ತು. ಆ ನಾಲ್ಕು ಚಕ್ರಗಳೂ ಒಂದೇ ಮಾದರಿಯಾಗಿದ್ದವು.</verse>
				<verse number="11">ಅವು ಹೊರಳುವಾಗ ನಾಲ್ಕು ಕಡೆಗಳಲ್ಲಿ ಯಾವ ಕಡೆಗಾದರೂ ಹೊರಳುತ್ತಿದ್ದವು, ಓರೆಯಾಗಿ ಹೊರಳುತ್ತಿರಲಿಲ್ಲ; ಎದುರು ಮುಖವಾಗಿ ಹೋಗುತ್ತಿದ್ದವೇ ಹೊರತು ಓರೆಯಾಗಿ ಹೋಗುತ್ತಿರಲಿಲ್ಲ.</verse>
				<verse number="12">ಕೆರೂಬಿಗಳ ಬೆನ್ನು, ಕೈ, ರೆಕ್ಕೆ, ಅಂತು ಸರ್ವಾಂಗಗಳಲ್ಲಿಯೂ ಹಾಗು ಚಕ್ರಗಳಲ್ಲಿಯೂ ಕಣ್ಣುಗಳು ಸರ್ವತ್ರ ತುಂಬಿದ್ದವು; ನಾಲ್ಕು ಕೆರೂಬಿಗಳಲ್ಲಿ ಒಂದೊಂದಕ್ಕೂ ಒಂದೊಂದು ಚಕ್ರವಿತ್ತು.</verse>
				<verse number="13">(ನಾನು ಕೇಳಿದಂತೆ ಆ ಚಕ್ರಗಳ ಹೆಸರು ಗರಗರಗಾಲಿ ಎಂದು.)</verse>
				<verse number="14">ಒಂದೊಂದು ಕೆರೂಬಿಗೆ ನಾಲ್ಕು ನಾಲ್ಕು ಮುಖಗಳಿದ್ದವು; ಮೊದಲನೆಯದು ಕೆರೂಬಿಯದು; ಎರಡನೆಯದು ಮನುಷ್ಯನದು, ಮೂರನೆಯದು ಸಿಂಹನದು, ನಾಲ್ಕನೆಯದು ಗರುಡಪಕ್ಷಿಯದು.</verse>
				<verse number="15">ಆ ಕೆರೂಬಿಗಳು ಮೇಲಕ್ಕೆ ಏರಿದವು; ನಾನು ಕೆಬಾರ್ ನದಿಯ ಹತ್ತಿರ ನೋಡಿದ ಜೀವಿಗಳು ಇವೇ.</verse>
				<verse number="16">ಕೆರೂಬಿಗಳು ಹೋಗುವಾಗ ಚಕ್ರಗಳೂ ಅವುಗಳ ಪಕ್ಕದಲ್ಲಿ ಹೋಗುತ್ತಿದ್ದವು; ಕೆರೂಬಿಗಳು ನೆಲದಿಂದ ಮೇಲಕ್ಕೆ ಏರಬೇಕೆಂದು ರೆಕ್ಕೆಗಳನ್ನು ಹರಡಿಕೊಂಡಾಗ ಚಕ್ರಗಳೂ ಓರೆಯಾಗದೆ ಅವರ ಸಂಗಡವೇ ಏರಿದವು.</verse>
				<verse number="17">ಜೀವಿಗಳ ಆತ್ಮ ಆ ಚಕ್ರಗಳಲ್ಲಿಯೂ ಇದ್ದ ಕಾರಣ, ಅವು ನಿಂತುಹೋದಾಗ ಇವೂ ನಿಂತುಹೋದವು, ಅವು ಏರಿದಾಗ ಇವೂ ಅವುಗಳ ಜೊತೆಯಲ್ಲೇ ಏರಿದವು.</verse>
				<verse number="18">ಬಳಿಕ ಸರ್ವೇಶ್ವರನ ತೇಜಸ್ಸು ದೇವಾಲಯದ ಹೊಸ್ತಿಲನ್ನು ಬಿಟ್ಟು, ಕೆರೂಬಿಗಳ ಮೇಲೆ ನಿಂತಿತು.</verse>
				<verse number="19">ಆಗ ನನ್ನ ಕಣ್ಣೆದುರಿಗೆ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡು ಚಕ್ರಸಮೇತವಾಗಿ ನೆಲದಿಂದ ಏರಿ ಹೊರಟು ಸರ್ವೇಶ್ವರನ ಆಲಯದ ಪೂರ್ವಬಾಗಿಲ ಮುಂದೆ ನಿಂತವು. ಅವುಗಳ ಮೇಲ್ಗಡೆ ಇಸ್ರಯೇಲಿನ ದೇವರ ತೇಜಸ್ಸು ನೆಲಸಿತ್ತು.</verse>
				<verse number="20">ಇಸ್ರಯೇಲಿನ ದೇವರ ವಾಹನವಾಗಿ ಕೆಬಾರ್ ನದಿಯ ಹತ್ತಿರ ನನಗೆ ಕಾಣಿಸಿದ ಆ ಜೀವಿಗಳು ಇವೇ; ಅವು ಕೆರೂಬಿಗಳೆಂದು ಈಗ ನನಗೆ ತಿಳಿದುಬಂತು.</verse>
				<verse number="21">ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು; ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯಹಸ್ತದಂಥ ಹಸ್ತಗಳು ಇದ್ದವು;</verse>
				<verse number="22">ಅವುಗಳ ಮುಖಗಳು ಕೆಬಾರ್ ನದಿಯ ಹತ್ತಿರ ನಾನು ಕಂಡ ಮುಖಗಳಂತೆ ನನಗೆ ಕಂಡುಬಂದವು. ಅವು ಆ ಮುಖಗಳೇ. ಪ್ರತಿಯೊಂದು ಜೀವಿಯು ಹೊರಟ ಮುಖವಾಗಿಯೇ ಹೋಗುತ್ತಿತ್ತು.</verse>
			</chapter>
			<chapter number="11">
				<verse number="1">ಆಮೇಲೆ ದೇವರಾತ್ಮ ನನ್ನನ್ನು ಎತ್ತಿ ಪೂರ್ವದಿಕ್ಕಿಗೆ ಅಭಿಮುಖವಾಗಿರುವ ಸರ್ವೇಶ್ವರನ ಆಲಯದ ಮೂಡಣ ಬಾಗಿಲಿಗೆ ತಂದುಬಿಟ್ಟಿತು. ಇಗೋ, ಬಾಗಿಲ ಮುಂದೆ ಇಪ್ಪತ್ತೈದು ಜನರು ನಿಂತಿದ್ದರು. ಅವರ ಮಧ್ಯೆ ಅಜ್ಜೂರನ ಮಗ ಯಾಜನ್ಯ, ಬೆನಾಯನ ಮಗ ಪೆಲತ್ಯ ಎಂಬ ಜನನಾಯಕರನ್ನು ನಾನು ನೋಡಿದೆ.</verse>
				<verse number="2">ಅಲ್ಲಿ ದೇವರು ನನಗೆ, “ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ;</verse>
				<verse number="3">ಇವರು, ‘ಮನೆಗಳನ್ನು ಕಟ್ಟಿಕೊಳ್ಳುವ ಕಾಲವು ಬಂದಿಲ್ಲ; ಈ ಪಟ್ಟಣವು ಒಂದು ಹಂಡೆ, ನಾವು ಅದರಲ್ಲಿನ ಮಾಂಸ’ ಎಂದು ಹೇಳುತ್ತಾರೆ.</verse>
				<verse number="4">ಆದಕಾರಣ, ನರಪುತ್ರನೇ, ನೀನು ಇವರ ವಿಷಯವಾಗಿ ಶಾಪಹಾಕು, ತಪ್ಪದೆ ಹಾಕು,” ಎಂದು ಆಜ್ಞಾಪಿಸಿದರು.</verse>
				<verse number="5">ಆಗ ಸರ್ವೇಶ್ವರನ ಆತ್ಮ ನನ್ನಲ್ಲಿ ಆವೇಶ ಉಂಟುಮಾಡಿತು. ಹೀಗೆ ಸಾರಬೇಕೆಂದು ಅಪ್ಪಣೆ ಆಯಿತು: ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲ್ ವಂಶದವರೇ, ನೀವು ಹೀಗೆ ಮಾತಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.</verse>
				<verse number="6">ನೀವು ಈ ಪಟ್ಟಣದಲ್ಲಿ ನರಹತ್ಯವನ್ನು ಹೆಚ್ಚೆಚ್ಚಾಗಿ ಮಾಡಿ ಹತರಾದವರಿಂದ ಬೀದಿಗಳನ್ನು ತುಂಬಿಸಿದ್ದೀರಿ.</verse>
				<verse number="7">“ಆದಕಾರಣ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನಿಮ್ಮ ದೋಷದಿಂದ ಹತರಾಗಿ ಪಟ್ಟಣದಲ್ಲಿ ಬಿದ್ದಿರುವ ನಿಮ್ಮವರ ಶವಗಳೇ ಹಂಡೆಯಲ್ಲಿನ ಮಾಂಸ, ಈ ಪಟ್ಟಣವೇ ಹಂಡೆ, ನಿಮ್ಮನ್ನಾದರೋ ನಾನು ಪಟ್ಟಣದೊಳಗಿಂದ ಕಿತ್ತುಹಾಕುವೆನು.</verse>
				<verse number="8">ಖಡ್ಗಕ್ಕೆ ಹೆದರಿದ ನಿಮ್ಮನ್ನೇ ಖಡ್ಗಕ್ಕೆ ಗುರಿಮಾಡುವೆನು; ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="9">ನಾನು ಪಟ್ಟಣದೊಳಗಿಂದ ನಿಮ್ಮನ್ನು ಕಿತ್ತು ಅನ್ಯರ ಕೈಗೆ ಕೊಟ್ಟು ದಂಡಿಸುವೆನು.</verse>
				<verse number="10">ನೀವು ಖಡ್ಗಕ್ಕೆ ತುತ್ತಾಗುವಿರಿ. ಇಸ್ರಯೇಲಿನ ಮೇರೆಯಲ್ಲೆ ನಿಮಗೆ ದಂಡನೆಯನ್ನು ವಿಧಿಸುವೆನು; ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.</verse>
				<verse number="11">ಈ ಪಟ್ಟಣ ನಿಮಗೆ ಹಂಡೆಯಾಗುವುದಿಲ್ಲ; ನೀವು ಅದರಲ್ಲಿ ಮಾಂಸವಾಗುವುದಿಲ್ಲ; ಇಸ್ರಯೇಲಿನ ಮೇರೆಯಲ್ಲೆ ನಿಮಗೆ ದಂಡನೆಯನ್ನು ವಿಧಿಸುವೆನು.</verse>
				<verse number="12">ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು; ನೀವು ನನ್ನ ವಿಧಿಗಳನ್ನು ಕೈಗೊಳ್ಳದೆ, ನನ್ನ ನಿಯಮಗಳನ್ನು ಅನುಸರಿಸದೆ, ನಿಮ್ಮ ಸುತ್ತಲಿನ ಜನಾಂಗಗಳ ಆಚಾರಗಳನ್ನೇ ಅನುಸರಿಸಿದ್ದರಿಂದ ಇದೆಲ್ಲಾ ಆಗುವುದು.”</verse>
				<verse number="13">ನಾನು ಈ ಮಾತನ್ನು ನುಡಿಯುತ್ತಿರುವಾಗಲೇ ಬೆನಾಯನ ಮಗ ಪೆಲತ್ಯನು ಸತ್ತುಹೋದನು. ಆಗ ನಾನು ಅಡ್ಡಬಿದ್ದು ಗಟ್ಟಿಯಾಗಿ ಕೂಗಿಕೊಂಡೆ. “ಅಯ್ಯೋ, ಸರ್ವೇಶ್ವರನಾದ ದೇವರೇ, ಇಸ್ರಯೇಲಿನಲ್ಲಿ ಉಳಿದವರನ್ನು ಸಂಪೂರ್ಣವಾಗಿ ನಿರ್ಮೂಲನಮಾಡುವಿರೋ?” ಎಂದು ಮೊರೆಯಿಟ್ಟೆ.</verse>
				<verse number="14">ಆಗ ಸರ್ವೇಶ್ವರ ನನಗೆ ದಯಪಾಲಿಸಿದ ವಾಣಿ ಇದು:</verse>
				<verse number="15">“ನರಪುತ್ರನೇ, ನಿನ್ನ ಸಹೋದರರಿಗೆ, ನಿನ್ನ ಅಣ್ಣತಮ್ಮಂದಿರಿಗೆ, ನಿನ್ನ ನೆಂಟರಿಷ್ಟರಿಗೆ, ಅಂತು ಇಸ್ರಯೇಲ್ ವಂಶದ ಎಲ್ಲರಿಗೆ, ಜೆರುಸಲೇಮಿನಲ್ಲೇ ಉಳಿದಿರುವವರು, ‘ಸರ್ವೇಶ್ವರನ ಬಳಿಯಿಂದ ದೂರವಾಗಿ ತೊಲಗಿರಿ, ಈ ನಾಡು ನಮಗೇ ಸೊತ್ತಾಗಿ ಸಿಕ್ಕಿದೆ,’ ಎಂದು ಹೇಳಿ ಹೀನೈಸುತ್ತಿದ್ದಾರಲ್ಲವೆ?</verse>
				<verse number="16">“ಆದಕಾರಣ ನೀನು ಹೀಗೆ ಸಾರು; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನಾನು ಅವರನ್ನು ದೂರ ಗಡೀಪಾರುಮಾಡಿ, ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದ್ದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಕೊಂಚಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.</verse>
				<verse number="17">“ಆಮೇಲೆ ಅವರನ್ನು ಜನಾಂಗಗಳಿಂದ ಒಟ್ಟುಗೂಡಿಸುವೆನು. ಚದರಿರುವ ದೇಶಗಳಿಂದ ಅವರನ್ನು ಒಟ್ಟಿಗೆ ಬರಮಾಡಿ ಇಸ್ರಯೇಲ್ ನಾಡನ್ನು ಅವರಿಗೆ ದಯಪಾಲಿಸುವೆನು.</verse>
				<verse number="18">ಅವರು ಅಲ್ಲಿಗೆ ಸೇರಿ ಎಲ್ಲ ಅಸಹ್ಯ ವಸ್ತುಗಳನ್ನೂ ಸಮಸ್ತ ಅನಿಷ್ಟ ವಿಗ್ರಹಗಳನ್ನೂ ತೆಗೆದುಹಾಕುವರು.</verse>
				<verse number="19">ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸುವಂತೆ ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ, ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು;</verse>
				<verse number="20">ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.</verse>
				<verse number="21">ಆದರೆ ಯಾರ ಮನಸ್ಸು ತಮ್ಮ ಅಸಹ್ಯವಸ್ತುಗಳನ್ನೂ ಅನಿಷ್ಟ ವಿಗ್ರಹಗಳನ್ನೂ ಅನುಸರಿಸುತ್ತದೋ ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು, ಇದು ಸರ್ವೇಶ್ವರನಾದ ದೇವರ ನುಡಿ.”</verse>
				<verse number="22">ಬಳಿಕ ಚಕ್ರಗಳ ಪಕ್ಕದಲ್ಲಿದ್ದ ಕೆರೂಬಿಗಳು ರೆಕ್ಕೆಗಳನ್ನು ಹರಡಿಕೊಂಡವು. ಇಸ್ರಯೇಲಿನ ದೇವರ ತೇಜಸ್ಸು ಅವುಗಳ ಮೇಲ್ಗಡೆ ನೆಲಸಿತ್ತು.</verse>
				<verse number="23">ಆಗ ಸರ್ವೇಶ್ವರನ ತೇಜಸ್ಸು ಪಟ್ಟಣದ ಮಧ್ಯದಿಂದ ಏರಿ, ಪಟ್ಟಣಕ್ಕೆ ಪೂರ್ವದಲ್ಲಿರುವ ಗುಡ್ಡದ ಮೇಲೆ ನಿಂತಿತು.</verse>
				<verse number="24">ಆ ಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯದರ್ಶನದ ಮುಖಾಂತರ ಬಾಬಿಲೋನಿಯ ದೇಶದಲ್ಲಿ ಸೆರೆಯಾಗಿದ್ದವರ ಬಳಿಗೆ ಒಯ್ದು ತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.</verse>
				<verse number="25">ಸರ್ವೇಶ್ವರ ತೋರಿಸಿದ ಎಲ್ಲವುಗಳನ್ನು ಕೂಡಲೆ ಸೆರೆಯವರಿಗೆ ತಿಳಿಸಿದೆ.</verse>
			</chapter>
			<chapter number="12">
				<verse number="1">ಸರ್ವೇಶ್ವರ ನನಗೆ ಅನುಗ್ರಹಿಸಿದ ವಾಣಿ ಇದು:</verse>
				<verse number="2">“ನರಪುತ್ರನೇ, ನೀನು ದ್ರೋಹಿವಂಶದ ಮಧ್ಯೆ ವಾಸಿಸುತ್ತಿರುವೆ. ಆ ವಂಶದವರು ದ್ರೋಹಿಗಳಾಗಿರುವುದರಿಂದ ಕಣ್ಣಿದ್ದರೂ ಕಾಣರು, ಕಿವಿಯಿದ್ದರೂ ಕೇಳರು.</verse>
				<verse number="3">“ನರಪುತ್ರನೇ, ವಲಸೆಹೋಗುವುದಕ್ಕೆ ಬೇಕಾದ ಸಾಮಗ್ರಿಗಳನ್ನು ನೀನು ಕೂಡಿಸಿಕೊಂಡು ಹಗಲಿನಲ್ಲಿ ಅವರ ಕಣ್ಣೆದುರಿಗೇ ಹೊರಡು. ಅಂದರೆ, ನಿನ್ನ ವಾಸಸ್ಥಳವನ್ನು ಬಿಟ್ಟು ಅವರು ನೋಡುವ ಹಾಗೆ ಬೇರೊಂದು ಸ್ಥಳಕ್ಕೆ ಹೋಗು: ಅವರು ದ್ರೋಹಿವಂಶದವರಾಗಿದ್ದರೂ ಒಂದು ವೇಳೆ ತಮ್ಮ ದ್ರೋಹವನ್ನು ಮನಸ್ಸಿಗೆ ತಂದುಕೊಳ್ಳಬಹುದು.</verse>
				<verse number="4">ನೀನು ನಿನ್ನ ಸಾಮಗ್ರಿಗಳನ್ನು ವಲಸೆಯ ಸಾಮಗ್ರಿಗಳನ್ನೊ ಎಂಬಂತೆ ಹಗಲಿನಲ್ಲಿ ಅವರ ಕಣ್ಣೆದುರಿಗೆ ಮನೆಯೊಳಗಿಂದ ಆಚೆಗೆ ಹಾಕಿ ವಲಸೆ ಹೋಗುವವನಂತೆ ಸಾಯಂಕಾಲ ಅವರ ಸಮಕ್ಷಮ ಹೊರಟುಹೋಗು.</verse>
				<verse number="5">ಅವರು ನೋಡುತ್ತಿರುವಾಗ, ನೀನು ಗೋಡೆಯನ್ನು ತೋಡಿ, ಕಂಡಿಯ ಮೂಲಕ ನಿನ್ನ ಸಾಮಗ್ರಿಗಳನ್ನು ಸಾಗಿಸಿಕೊಂಡು ಹೋಗು.</verse>
				<verse number="6">ಅವರ ಕಣ್ಣ ಮುಂದೆ, ಅದನ್ನು ಹೆಗಲ ಮೇಲೆಹಾಕಿ, ಕತ್ತಲಲ್ಲಿ ಹೊತ್ತುಕೊಂಡುಹೋಗು; ನೆಲವನ್ನು ನೋಡದಂತೆ ಮೋರೆಯನ್ನು ಮುಚ್ಚಿಕೋ; ನಾನು ನಿನ್ನನ್ನು ಇಸ್ರಯೇಲ್ ವಂಶದವರಿಗೆ ಮುಂಗುರುತನ್ನಾಗಿ ಮಾಡಿದ್ದೇನೆ.”</verse>
				<verse number="7">ಆಗ ನಾನು ನನಗಾದ ಅಪ್ಪಣೆಯನ್ನು ನೆರವೇರಿಸಿದೆ: ಹಗಲಿನಲ್ಲಿ ನನ್ನ ಸಾಮಗ್ರಿಗಳನ್ನು ವಲಸೆಯ ಸಾಮಗ್ರಿಗಳನ್ನೋ ಎಂಬಂತೆ ಮನೆಯೊಳಗಿನಿಂದ ಆಚೆಗೆ ಹಾಕಿದೆ; ಸಾಯಂಕಾಲ ನನ್ನ ಕೈಯಿಂದಲೇ ಗೋಡೆಯನ್ನು ಕಂಡಿಮಾಡಿ, ಕತ್ತಲಲ್ಲಿ ಆ ಸಾಮಗ್ರಿಗಳನ್ನು ಆಚೆಗೆ ಸಾಗಿಸಿ, ಅವರ ಕಣ್ಣ ಮುಂದೆ ಹೆಗಲ ಮೇಲೆ ಹೊತ್ತುಕೊಂಡು ಹೋದೆ.</verse>
				<verse number="8">ಬೆಳಿಗ್ಗೆ ಸರ್ವೇಶ್ವರನಿಂದ ಈ ವಾಣಿ ನನಗೆ ಕೇಳಿಸಿತು:</verse>
				<verse number="9">“ನರಪುತ್ರನೇ, ದ್ರೋಹಿವಂಶದವರಾದ ಇಸ್ರಯೇಲರು, ‘ನೀನು ಏನು ಮಾಡುತ್ತಿರುವೆ?’ ಎಂದು ನಿನ್ನನ್ನು ಕೇಳಿದ್ದಾರಲ್ಲವೆ?</verse>
				<verse number="10">ನೀನು ಅವರಿಗೆ ಹೀಗೆ ನುಡಿ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಈ ಹೊರೆ ಜೆರುಸಲೇಮಿನಲ್ಲಿರುವ ರಾಜನಿಗೂ ಅಲ್ಲಿನ ಇಸ್ರಯೇಲ್ ವಂಶದವರೆಲ್ಲರಿಗೂ ಸಂಬಂಧಪಟ್ಟಿದೆ;</verse>
				<verse number="11">ಇದನ್ನೂ ನುಡಿ, - ‘ನಾನು ನಿಮಗೆ ಮುಂಗುರುತಾಗಿದ್ದೇನೆ. ನಾನು ಮಾಡಿದಂತೆಯೇ ಅವರಿಗಾಗುವುದು: ಅವರು ವಲಸೆಯಾಗಿ ಸೆರೆಹೋಗುವರು.</verse>
				<verse number="12">ಅವರಲ್ಲಿನ ರಾಜನು ಹೆಗಲ ಮೇಲೆ ಹೊರೆಯನ್ನು ಹೊತ್ತುಕೊಂಡು ಕತ್ತಲಲ್ಲಿ ಹೊರಟುಹೋಗುವನು: ಅವನು ಗೋಡೆಯನ್ನು ತೋಡಿ, ಕಂಡಿಯ ಮೂಲಕ ಸಾಮಗ್ರಿಗಳನ್ನು ಆಚೆಗೆ ಸಾಗಿಸುವನು; ಅವನು ಮೋರೆಯನ್ನು ಮುಚ್ಚಿಕೊಳ್ಳುವನು, ಭೂಮಿಯು ಅವನ ಕಣ್ಣಿಗೆ ಕಾಣಿಸದು.</verse>
				<verse number="13">ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು: ಬಾಬಿಲೋನಿಯಾ ದೇಶದ ಬಾಬಿಲೋನ್ ನಗರಕ್ಕೆ ಅವನನ್ನು ಒಯ್ಯುವೆನು; ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡನು.</verse>
				<verse number="14">ಅವನ ಸುತ್ತಲಿನ ಸಕಲ ಸಹಾಯಕರನ್ನೂ ಅವನ ಸಮಸ್ತವ್ಯೂಹಗಳವರನ್ನೂ ನಾನು ಎಲ್ಲ ಕಡೆಯ ಗಾಳಿಗೂ ತೂರಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.</verse>
				<verse number="15">“ನಾನು ಅವರನ್ನು ಜನಾಂಗಗಳೊಳಗೆ ಚದರಿಸಿಬಿಟ್ಟು, ಅನ್ಯದೇಶಗಳಲ್ಲಿ ಚಲ್ಲಾಪಿಲ್ಲಿ ಮಾಡುವಾಗ ನಾನೇ ಸರ್ವೇಶ್ವರ ಎಂದು ಅವನಿಗೆ ಗೊತ್ತಾಗುವುದು.</verse>
				<verse number="16">ನಾನು ಕೆಲವರನ್ನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ಉಳಿಸಿ, ಅವರು ತಮ್ಮ ಅಸಹ್ಯಕಾರ್ಯಗಳ ವಿಷಯವನ್ನು ತಾವು ಸೇರಿದ ಜನಾಂಗಗಳಲ್ಲಿ ತಿಳಿಸುವುದಕ್ಕೆ ಅವಕಾಶ ಮಾಡುವೆನು: ನಾನೇ ಸರ್ವೇಶ್ವರ ಎಂದು ಆ ಜನಾಂಗಗಳಿಗೂ ಗೊತ್ತಾಗುವುದು.”</verse>
				<verse number="17">ಇದಲ್ಲದೆ ಸರ್ವೇಶ್ವರನ ವಾಣಿ ನನಗೆ ಇಂತೆಂದಿತು:</verse>
				<verse number="18">“ನರಪುತ್ರನೇ, ನೀನು ಅನ್ನವನ್ನು ಅಂಜಿಕೆಯಿಂದ ತಿಂದು, ನೀರನ್ನು ನಡುಕದಿಂದ ಕುಡಿದು, ಆ ದೇಶದಲ್ಲಿರುವ ಜನರಿಗೆ ಹೀಗೆ ಹೇಳು:</verse>
				<verse number="19">ಸರ್ವೇಶ್ವರನಾದ ದೇವರು ಇಸ್ರಯೇಲ್ ನಾಡಿನ ಜೆರುಸಲೇಮ್ ನಿವಾಸಿಗಳನ್ನೂ ಕುರಿತು ಇಂತೆನ್ನುತ್ತಾರೆ: ‘ಅವರು ಅನ್ನವನ್ನು ಅಂಜಿಕೆಯಿಂದ ತಿಂದು ನೀರನ್ನು ನಡುಕದಿಂದ ಕುಡಿಯುವರು: ಏಕೆಂದರೆ ಆ ನಾಡಿನಲ್ಲಿರುವವರು ಹಿಂಸಾಚಾರಿಗಳು; ಈ ಕಾರಣ, ಅಲ್ಲಿನ ಸೊತ್ತೆಲ್ಲಾ ಸೂರೆಯಾಗಿ, ನಾಡು ಬರಿದಾಗುವುದು.</verse>
				<verse number="20">ಆಗ ಜನ ತುಂಬಿದ ಊರುಗಳು ಹಾಳಾಗಿ ನಾಡು ಪಾಳುಬೀಳುವುದು; ನಾನೇ ಸರ್ವೇಶ್ವರ ಎಂದು ನಿಮಗೆ ಆಗ ಗೊತ್ತಾಗುವುದು.”</verse>
				<verse number="21">ಆಮೇಲೆ ಸರ್ವೇಶ್ವರನ ವಾಣಿ ನನಗೆ ದಯಪಾಲಿಸಿದ್ದು:</verse>
				<verse number="22">“ನರಪುತ್ರನೇ, ‘ಕ್ಲುಪ್ತಕಾಲ ದೂರ ದೂರ ಹೋಗುತ್ತಲಿದೆ, ದಿವ್ಯದರ್ಶನಗಳೆಲ್ಲಾ ನಿರರ್ಥಕ’ ಎಂಬುದಾಗಿ ಇಸ್ರಯೇಲ್ ನಾಡಿನವರು ಆಡಿಕೊಳ್ಳುವ ಈ ಗಾದೆ ಏನು?</verse>
				<verse number="23">ಅವರಿಗೆ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಈ ಗಾದೆಯನ್ನು ನಿಲ್ಲಿಸಿಬಿಡುವೆನು; ಅದು ಇಸ್ರಯೇಲಿನಲ್ಲಿ ಇನ್ನು ಸಲ್ಲದು; ನಾನು ನುಡಿಯುವ ಆ ಮಾತನ್ನು ಕೇಳಿರಿ: ಕ್ಲುಪ್ತಕಾಲ ಹತ್ತಿರಬಂದಿದೆ. ದಿವ್ಯದರ್ಶನಗಳೆಲ್ಲಾ ಸಾರ್ಥಕವಾಗುವ ಕಾಲ ಸಮೀಪಿಸಿದೆ.</verse>
				<verse number="24">“ಇನ್ನು ಮೇಲೆ ಇಸ್ರಯೇಲ್ ವಂಶದವರಲ್ಲಿ ಯಾರಿಗೂ ಸುಳ್ಳು ದರ್ಶನವಾಗದು; ಮೋಸದ ಕಣಿ ಇರದು.</verse>
				<verse number="25">ನಾನೇ ಸರ್ವೇಶ್ವರ; ನಾನು ನುಡಿದೆ ತೀರುವೆನು; ನಾನು ನುಡಿದ ಮಾತು ನೆರವೇರುವುದು, ಇನ್ನು ನಿಧಾನವಾಗದು. ದ್ರೋಹಿ ವಂಶದವರೇ, ನಾನು ನಿಮ್ಮ ಕಾಲದಲ್ಲಿ ನುಡಿಯುವುದು ಮಾತ್ರವಲ್ಲದೆ ನುಡಿದದ್ದನ್ನು ನೆರವೇರಿಸುವೆನು. ಇದು ಸರ್ವೇಶ್ವರನಾದ ದೇವರ ವಾಕ್ಯ.”</verse>
				<verse number="26">ಮತ್ತು ಸರ್ವೇಶ್ವರನ ವಾಣಿ ನನಗೆ ಹೀಗೆಂದಿತು:</verse>
				<verse number="27">“ನರಪುತ್ರನೇ, ಇಗೋ, ಇಸ್ರಯೇಲ್ ವಂಶದವರು, ‘ಇವನಿಗಾದ ದಿವ್ಯದರ್ಶನ ಮುಂದೆ ಬಹುದೂರ ಕಾಲಕ್ಕೆ ಸಂಬಂಧಪಟ್ಟದ್ದು; ಬಹಳ ದಿನಗಳ ಮೇಲೆ ಆಗತಕ್ಕನ್ನು ಮುಂತಿಳಿಸುತ್ತಾನೆ’ ಎಂದು ಹೇಳುತ್ತಾರೆ.</verse>
				<verse number="28">ಆದಕಾರಣ ನೀನು ಅವರಿಗೆ ಹೀಗೆ ಹೇಳು: ಸರ್ವೇಶ್ವರನಾದ ದೇವರು ಹೇಳುವುದನ್ನು ಗಮನಿಸಿ: ಇನ್ನು ಮೇಲೆ ನನ್ನ ಮಾತುಗಳಲ್ಲಿ ಯಾವುದೂ ಸಾವಕಾಶವಾಗದು; ನಾನಾಡುವ ಮಾತು ನೆರವೇರುವುದು ಖಂಡಿತ; ಇದು ಸರ್ವೇಶ್ವರನಾದ ದೇವರ ನುಡಿ.”</verse>
			</chapter>
			<chapter number="13">
				<verse number="1">ಸರ್ವೇಶ್ವರ ನನಗೆ ಅನುಗ್ರಹಿಸಿದ ವಾಣಿ ಇದು:</verse>
				<verse number="2">“ನರಪುತ್ರನೇ, ಪ್ರವಾದನೆ ಮಾಡಿ ಸ್ವಕಲ್ಪಿತವಾದುದನ್ನೇ ಸಾರುತ್ತಲಿರುವ ಇಸ್ರಯೇಲಿನ ಪ್ರವಾದಿಗಳಿಗೆ ಖಂಡನೆಯಾಗಿ ನೀನು ಪ್ರವಾದಿಸುತ್ತ ಹೀಗೆ ಹೇಳು: “ಸರ್ವೇಶ್ವರನ ವಾಕ್ಯವನ್ನು ಕೇಳಿರಿ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ:</verse>
				<verse number="3">‘ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖಪ್ರವಾದಿಗಳಿಗೆ ಧಿಕ್ಕಾರ!</verse>
				<verse number="4">ಇಸ್ರಯೇಲೇ, ನಿನ್ನ ಪ್ರವಾದಿಗಳು ಹಾಳು ಪ್ರದೇಶಗಳಲ್ಲಿನ ಗುಳ್ಳೆನರಿಗಳಂತಿದ್ದಾರೆ!</verse>
				<verse number="5">ಸರ್ವೇಶ್ವರನ ದಿನದಲ್ಲಿ ಯುದ್ಧಕ್ಕೆ ನಿಲ್ಲಬೇಕೆಂದು ನೀವು ಪೌಳಿಯ ಒಡಕುಗಳನ್ನೇರಲಿಲ್ಲ. ಇಸ್ರಯೇಲ್ ವಂಶದ ರಕ್ಷಣೆಗಾಗಿ ಗೋಡೆಯನ್ನು ಗಟ್ಟಿಮಾಡಲೂ ಇಲ್ಲ.</verse>
				<verse number="6">ಸರ್ವೇಶ್ವರ ಇಂತೆನ್ನುತ್ತಾರೆಂದು ನುಡಿ: ಅಂಥವರಿಗೆ ಆದ ದರ್ಶನ ಮಿಥ್ಯ; ಕೇಳಿಸಿದ ವಾಣಿ ಸುಳ್ಳು; ಸರ್ವೇಶ್ವರ ಅವರನ್ನು ಕಳುಹಿಸಲಿಲ್ಲ. ತಾವು ನುಡಿದ ಮಾತು ನೆರವೇರುವುದೆಂದು ಸುಮ್ಮಸುಮ್ಮನೆ ನಿರೀಕ್ಷಿಸಿಕೊಂಡಿದ್ದಾರೆ.</verse>
				<verse number="7">ನಾನು ಮಾತಾಡದೆ ಇದ್ದರೂ ‘ಸರ್ವೇಶ್ವರ ಇಂತೆನ್ನುತ್ತಾರೆ’ ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನ ಮಿಥ್ಯ, ನೀವು ಹೇಳಿದ ಭವಿಷ್ಯ ಸುಳ್ಳು.’</verse>
				<verse number="8">ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನೀವು ವ್ಯರ್ಥವಾದುದನ್ನು ನುಡಿದು ಸುಳ್ಳಾದುದನ್ನು ಕಂಡದ್ದರಿಂದ ಇಗೋ, ನಿಮಗೆ ವಿರುದ್ಧವಾಗಿದ್ದೇನೆ, ಇದು ಸರ್ವೇಶ್ವರನಾದ ದೇವರೆಂಬ ನನ್ನ ನುಡಿ.</verse>
				<verse number="9">ಮಿಥ್ಯದರ್ಶನ ಹೊಂದಿ ಸುಳ್ಳು ಭವಿಷ್ಯ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರಿಯ ಸಭೆಯಲ್ಲಿ ಸೇರಕೂಡದು, ಇಸ್ರಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರು ಲಿಖಿತವಾಗಬಾರದು, ಅವರು ಇಸ್ರಯೇಲ್ ನಾಡನ್ನು ಪ್ರವೇಶಿಸಲೂಬಾರದು. ನಾನೇ ಸರ್ವೇಶ್ವರನಾದ ದೇವರು ಎಂದು ನಿಮಗೆ ಗೊತ್ತಾಗುವುದು.</verse>
				<verse number="10">“ಅಶಾಂತಿಯಿರುವಾಗಲೂ ಅವರು ಶಾಂತಿಯಿದೆ ಎಂದು ಹೇಳಿ ನನ್ನ ಜನಗಳನ್ನು ವಂಚಿಸಿದ್ದಾರೆ. ಜನರು ದುರ್ಬಲ ಗೋಡೆಯನ್ನು ಕಟ್ಟಿದ್ದಾರೆ. ಅದಕ್ಕೆ ಆ ಪ್ರವಾದಿಗಳು ಸುಣ್ಣ ಬಳಿಯುತ್ತಾರೆ;</verse>
				<verse number="11">ಆದಕಾರಣ, ನೀನು ಸುಣ್ಣ ಬಳಿಯುವವರಿಗೆ ಹೀಗೆ ನುಡಿ: ‘ವಿಪರೀತ ಮಳೆಯಾಗಿ ಗೋಡೆ ಬಿದ್ದುಹೋಗುವುದು, ಆನೆಕಲ್ಲುಗಳು ಸುರಿಯುವುವು; ಬಿರುಗಾಳಿ ಗೋಡೆಯನ್ನು ಕೆಡವಿಹಾಕುವುದು;</verse>
				<verse number="12">ಇಗೋ, ಗೋಡೆ ಬಿದ್ದ ಮೇಲೆ, ‘ನೀವು ಬಳಿದ ಸುಣ್ಣ ಎಲ್ಲಿ?’ ಎಂದು ನಿಮ್ಮನ್ನು ಕೇಳುವರಲ್ಲವೆ?’</verse>
				<verse number="13">“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಕೆಡವಿಹಾಕುವೆನು; ಅದನ್ನು ನಾಶಮಾಡಲು ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು; ರೋಷದಿಂದ ಆನೆಕಲ್ಲುಗಳು ಸುರಿಯುವುವು.</verse>
				<verse number="14">ನೀನು ಸುಣ್ಣ ಬಳಿದ ಗೋಡೆಯನ್ನು ನಾನು ಹೀಗೆ ಕೆಡವಿ ನೆಲಸಮಮಾಡಿ ಅದರ ಅಸ್ತಿವಾರವನ್ನು ಹೊರಗೆಡಹುವೆನು; ಅದು ಹೀಗೆ ಬಿದ್ದುಹೋಗುವಾಗ ನೀವು ಅದರೊಳಗೆ ಸಿಕ್ಕಿ ನಾಶವಾಗುವಿರಿ; ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.’</verse>
				<verse number="15">“ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣಬಳಿದ ನಿಮ್ಮಲ್ಲಿಯೂ ರೋಷವನ್ನು ತೀರಿಸಿಕೊಂಡು ಇಂತೆನ್ನುವೆನು:</verse>
				<verse number="16">‘ಇಸ್ರಯೇಲಿನ ಪ್ರವಾದಿಗಳೇ, ಅಶಾಂತಿಯಿದ್ದರೂ ಶಾಂತಿಯ ದರ್ಶನಗಳನ್ನು ನೀವು ಕಂಡು ಜೆರುಸಲೇಮಿನ ಬಗ್ಗೆ ಪ್ರವಾದಿಸಿದ್ದೀರಲ್ಲವೆ? ಗೋಡೆ ಇಲ್ಲವಾಯಿತು, ಅದಕ್ಕೆ ಸುಣ್ಣ ಬಳಿದವರೂ ಇಲ್ಲವಾದರು; ಇದು ಸರ್ವೇಶ್ವರನಾದ ದೇವರ ನುಡಿ.’</verse>
				<verse number="17">“ನರಪುತ್ರನೇ, ಸ್ವಕಲ್ಪಿತವಾದದ್ದನ್ನು ಭವಿಷ್ಯವಾಣಿ ಎಂದು ಹೇಳುವ ನಿನ್ನ ಸ್ವಕುಲ ಮಹಿಳೆಯರ ಕಡೆಗೆ ಮುಖಮಾಡಿಕೊಂಡು ಅವರನ್ನೂ ಖಂಡಿಸಿ ಹೀಗೆ ಪ್ರವಾದಿಸು:</verse>
				<verse number="18">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಜನರ ಪ್ರಾಣಗಳನ್ನು ಬೇಟೆಯಾಡಬೇಕೆಂದು, ಎಲ್ಲರ ಮೊಣಕೈಗಳಿಗೆ ತಾಯಿತಿಗಳನ್ನು ಕಟ್ಟಿ, ಉದ್ದವಾದವರಿಗೂ ಗಿಡ್ಡವಾದವರಿಗೂ ತಕ್ಕತಕ್ಕ ಮುಸುಕುಗಳನ್ನು ಸಿದ್ಧಮಾಡಿಕೊಂಡಿರುವ ಮಹಿಳೆಯರಿಗೆ ಧಿಕ್ಕಾರ! ಮಹಿಳೆಯರೇ, ನೀವು ನನ್ನ ಜನರ ಪ್ರಾಣಗಳನ್ನು ಬೇಟೆಯಾಡಿ, ನಿಮಗೆ ಬೇಕಾದವರ ಪ್ರಾಣಗಳನ್ನು ಉಳಿಸಿಕೊಳ್ಳುವಿರೋ?</verse>
				<verse number="19">ನೀವು ಹಿಡಿಯುವಷ್ಟೆ ಜವೆಗೋಧಿಗೆ, ಚೂರುಪಾರು ರೊಟ್ಟಿಗೆ ಆಸೆಪಟ್ಟು, ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.”</verse>
				<verse number="20">ಹೀಗಿರಲು, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಅಕಟಾ! ನೀವು ಜನರ ಪ್ರಾಣಗಳನ್ನು ಪಕ್ಷಿಗಳನ್ನೋ ಎಂಬಂತೆ ಬೇಟೆಯಾಡುವುದಕ್ಕೆ ಸಾಧನವಾದ ನಿಮ್ಮ ತಾಯಿತಿಗಳಿಗೆ ನಾನು ಹೇಸಿ, ಅವುಗಳನ್ನು ನಿಮ್ಮ ಕೈಗಳಿಂದ ಕಿತ್ತುಹಾಕುವೆನು; ನೀವು ಬೇಟೆಯಾಡುವ ಪ್ರಾಣಿಗಳನ್ನು ಬಿಡುಗಡೆಮಾಡಿ ಪಕ್ಷಿಗಳ ಹಾಗೆ ಸ್ವತಂತ್ರವಾಗಿಸುವೆನು.</verse>
				<verse number="21">ನಾನು ನಿಮ್ಮ ಮುಸುಕುಗಳನ್ನೂ ಹರಿದು, ನನ್ನ ಜನರನ್ನು ನಿಮ್ಮ ಕೈಯಿಂದ ತಪ್ಪಿಸುವೆನು; ಅವರು ಇನ್ನು ಮೇಲೆ ನಿಮ್ಮ ಕೈಗೆ ಬೇಟೆಯಾಗಿ ಸಿಕ್ಕುವುದಿಲ್ಲ; ನಾನೆ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.</verse>
				<verse number="22">“ನಾನು ಎದೆಗುಂದಿಸದ ಶಿಷ್ಯನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನನ್ನು ಪ್ರೋತ್ಸಾಹಿಸಿದ್ದೀರಿ.</verse>
				<verse number="23">ಆದಕಾರಣ ನೀವು ಮಿಥ್ಯದರ್ಶನವನ್ನು ಹೊಂದಿ, ಸುಳ್ಳುಭವಿಷ್ಯ ಹೇಳುವ ಕೆಲಸ ಇನ್ನು ನಡೆಯುವುದೇ ಇಲ್ಲ; ನನ್ನ ಜನರನ್ನು ನಿಮ್ಮ ಕೈವಶದಿಂದ ಬಿಡಿಸುವೆನು; ನಾನೆ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.”</verse>
			</chapter>
			<chapter number="14">
				<verse number="1">ಇಸ್ರಯೇಲಿನ ಹಿರಿಯರಲ್ಲಿ ಕೆಲವರು ಬಂದು,</verse>
				<verse number="2">ನನ್ನ ಮುಂದೆ ಕುಳಿತುಕೊಂಡು ಇರುವಾಗ ಸರ್ವೇಶ್ವರ ನನಗೆ ಅನುಗ್ರಹಿಸಿದ ವಾಣಿ ಇದು:</verse>
				<verse number="3">“ನರಪುತ್ರನೇ, ಈ ಜನರು ವಿಗ್ರಹಗಳನ್ನು, ತಮ್ಮ ಹೃದಯದಲ್ಲಿ ನೆಲೆಗೊಳಿಸಿಕೊಂಡಿದ್ದಾರೆ. ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆಯೇ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಅಲ್ಲ.</verse>
				<verse number="4">“ಆದಕಾರಣ ನೀನು ಅವರನ್ನು ಸಂಬೋಧಿಸಿ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಸ್ರಯೇಲ್ ವಂಶದವರಲ್ಲಿ ಯಾರು ಯಾರು ವಿಗ್ರಹಗಳನ್ನು ತಮ್ಮ ಹೃದಯದಲ್ಲಿ ನೆಲೆಗೊಳಿಸಿಕೊಂಡಿದ್ದಾರೋ, ಪಾಪಕಾರಿಯಾದ ಆ ವಿಘ್ನವನ್ನು ತಮ್ಮ ಮುಂದೆಯೇ ಇಟ್ಟುಕೊಂಡಿದ್ದಾರೋ ಅಂಥವರು ಪ್ರವಾದಿಯನ್ನು ಪ್ರಶ್ನೆ ಕೇಳುವುದಕ್ಕೆ ಬಂದರೆ ಅವರು ಪಾತಕಕ್ಕೆ ಅಂದರೆ, ಅವರ ಲೆಕ್ಕವಿಲ್ಲದ ವಿಗ್ರಹಗಳಿಗೆ ತಕ್ಕ ಹಾಗೆ ಸರ್ವೇಶ್ವರನಾದ ನಾನೇ ಅವರಿಗೆ ಉತ್ತರಕೊಡುವೆನು.</verse>
				<verse number="5">ಇಸ್ರಯೇಲ್ ವಂಶದವರೆಲ್ಲರೂ ತಮ್ಮ ವಿಗ್ರಹಗಳ ನಿಮಿತ್ತ ನನ್ನನ್ನು ತೊರೆದುದ್ದರಿಂದ ನಾನು ಅವರನ್ನೆಲ್ಲಾ ಅವರ ಆಶಾಪಾಶದಲ್ಲೇ ಸಿಕ್ಕಿಸಿ ಹಿಡಿಯುವೆನು.</verse>
				<verse number="6">“ಆದಕಾರಣ ನೀನು ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀವು ನಿಮ್ಮ ವಿಗ್ರಹಗಳನ್ನು ತೊರೆದುಬಿಟ್ಟು ಹಿಂದಿರುಗಿರಿ; ನಿಮ್ಮ ಎಲ್ಲಾ ಅಸಹ್ಯವಸ್ತುಗಳ ಕಡೆಗೆ ಬೆನ್ನುಮಾಡಿರಿ.</verse>
				<verse number="7">“ಏಕೆಂದರೆ ಇಸ್ರಯೇಲ್ ವಂಶದವರಲ್ಲಾಗಲಿ ಇಸ್ರಯೇಲಿನಲ್ಲಿ ನೆಲೆಸಿರುವ ವಿದೇಶಿಗಳಲ್ಲಾಗಲಿ ಯಾವನಾದರೂ ನನ್ನಿಂದ ಅಗಲಿ ವಿಗ್ರಹಗಳನ್ನು ಹೃದಯದಲ್ಲಿ ನೆಲೆಗೊಳಿಸಿಕೊಂಡು ಪಾಪಕಾರಿಯಾದ ಆ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯ ಬಳಿಗೆ ಬಂದು, ಅವನ ಮೂಲಕ ದೈವೋತ್ತರವನ್ನು ಕೇಳಿಕೊಂಡರೆ ಅವನಿಗೆ ಸರ್ವೇಶ್ವರನಾದ ನಾನೇ ಉತ್ತರಕೊಡುವೆನು.</verse>
				<verse number="8">ಅವನಿಗೆ ವಿಮುಖನಾಗಿ ಅವನ ದುರ್ಗತಿಯು ಎಚ್ಚರಿಕೆಗೆ ಗುರುತಾಗಿಯೂ ಕಟ್ಟುಗಾದೆಗಳಿಗೆ ವಸ್ತುವಾಗಿಯೂ ಆಗುವಂತೆ ಮಾಡುವೆನು; ಅವನನ್ನು ನನ್ನ ಜನರಿಂದ ಹೊರಹಾಕುವೆನು; ಹೀಗೆ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.</verse>
				<verse number="9">“ಒಬ್ಬ ಪ್ರವಾದಿ ಮರುಳುಗೊಂಡು ದೈವೋಕ್ತಿಯೊಂದನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಸರ್ವೇಶ್ವರನಾದ ನಾನೇ. ನಾನು ಅವನ ಮೇಲೆ ಕೈಯೆತ್ತಿ ಇಸ್ರಯೇಲರಾದ ನನ್ನ ಜನರಿಂದ ತೆಗೆದುಹಾಕಿ ಅವನನ್ನು ನಿರ್ನಾಮ ಮಾಡುವೆನು.</verse>
				<verse number="10">ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆ ಕೇಳುವವನ ದೋಷವೂ ಅಷ್ಟೇ; ಉಭಯರೂ ತಮ್ಮ ತಮ್ಮ ದೋಷಫಲವನ್ನು ಅನುಭವಿಸುವರು.</verse>
				<verse number="11">ಹೀಗಾದರೆ ಇಸ್ರಯೇಲ್ ವಂಶದವರು ಇನ್ನು ನನ್ನನ್ನು ತೊರೆಯರು, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆಮಾಡಿಕೊಳ್ಳರು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿ ಇರುವೆನು; ಇದು ಸರ್ವೇಶ್ವರನಾದ ದೇವರ ನುಡಿ.”</verse>
				<verse number="12">ಸರ್ವೇಶ್ವರ ದಯಪಾಲಿಸಿದ ವಾಣಿ ನನಗೆ ಹೀಗೆಂದಿತು:</verse>
				<verse number="13">“ನರಪುತ್ರನೇ, ಒಂದು ನಾಡು ಅಪರಾಧವನ್ನು ನಡೆಸಿ ನನಗೆ ವಿರುದ್ಧ ಪಾಪಮಾಡಿದ ಮೇಲೆ ನಾನು ಕೈಯೆತ್ತಿ, ಅದರ ಜೀವನಾಧಾರವನ್ನು ನಿಲ್ಲಿಸಿಬಿಟ್ಟು, ಕ್ಷಾಮವನ್ನು ಬರಮಾಡಿ, ಜನ ಹಾಗೂ ಜಾನುವಾರುಗಳನ್ನು ಅದರಿಂದ ನಿರ್ಮೂಲಮಾಡುತ್ತೇನೆ.</verse>
				<verse number="14">ನೋಹ, ದಾನಿಯೇಲ, ಯೋಬ, ಎಂಬೀ ಮೂವರು ವ್ಯಕ್ತಿಗಳು ಆ ನಾಡಿನಲ್ಲಿದ್ದರೂ ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಮಾತ್ರ ಉಳಿಸಿಕೊಳ್ಳುತ್ತಿದ್ದರು; ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="15">“ನನ್ನ ಅಪ್ಪಣೆಯ ಮೇರೆಗೆ ದುಷ್ಟಮೃಗಗಳು ಆ ನಾಡಿನಲ್ಲಿ ತಿರುಗುತ್ತಾ ಅದನ್ನು ನಿರ್ಜನಗೊಳಿಸಿ, ಹಾಳುಮಾಡಿ, ಯಾರೂ ಹಾದುಹೋಗದಂತೆ ಹೆದರಿಸುವ ಪಕ್ಷದಲ್ಲಿ</verse>
				<verse number="16">ಈ ಮೂವರು ವ್ಯಕ್ತಿಗಳು ಅದರಲ್ಲಿದ್ದರೂ, ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡು ಮಕ್ಕಳನ್ನಾಗಲಿ ಹೆಣ್ಣು ಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ನಾಡು ಹಾಳಾಗಿ ಹೋಗುವುದು; ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="17">“ ‘ಖಡ್ಗವೇ, ಆ ನಾಡನ್ನು ಹೊಕ್ಕುಹೋಗು’ ಎಂದು ಆಜ್ಞಾಪಿಸಿ ನಾನು ಅದನ್ನು ಆ ನಾಡಿಗೆ ತಂದು, ಜನ ಹಾಗು ಜಾನುವಾರುಗಳನ್ನು ಅದರೊಳಗಿಂದ ನಿರ್ಮೂಲಮಾಡುವ ಪಕ್ಷದಲ್ಲಿ</verse>
				<verse number="18">ಈ ಮೂವರು ಪುರುಷರು ಅದರಲ್ಲಿದ್ದರೂ, ನನ್ನ ಜೀವದಾಣೆ, ತಾವು ಉಳಿದುಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಕ್ಕಳನ್ನಾಗಲಿ ಹೆಣ್ಣುಮಕ್ಕಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="19">“ನಾನು ಆ ನಾಡಿನ ಮೇಲೆ ಕೋಪಕಾರಿ, ರಕ್ತವನ್ನು ಸುರಿಸಿ, ವ್ಯಾಧಿಯನ್ನು ಕಳುಹಿಸಿ, ಜನ ಜಾನುವಾರುಗಳನ್ನು ನಿರ್ಮೂಲಮಾಡುವ ಪಕ್ಷದಲ್ಲಿ</verse>
				<verse number="20">ನೋಹ, ದಾನಿಯೇಲ, ಯೋಬ, ಎಂಬವರು ಅದರಲ್ಲಿದ್ದರೂ ನನ್ನ ಜೀವದಾಣೆ, ತಮ್ಮ ಸದಾಚಾರದಿಂದ ಸ್ವಂತಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ತಮ್ಮ ಗಂಡುಮಗನನ್ನಾಗಲಿ ಹೆಣ್ಣು ಮಗಳನ್ನಾಗಲಿ ಉಳಿಸಿಕೊಳ್ಳುತ್ತಿರಲಿಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.”</verse>
				<verse number="21">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಖಡ್ಗ, ಕ್ಷಾಮ, ದುಷ್ಟಮೃಗ, ವ್ಯಾಧಿ ಎಂಬ ನಾಲ್ಕು ಬಾಧೆಗಳನ್ನು ಜೆರುಸಲೇಮಿನ ಮೇಲೆ ಒಟ್ಟಿಗೆ ಬರಮಾಡಿ ಜನ ಜಾನುವಾರಗಳನ್ನು ನಿರ್ಮೂಲ ಮಾಡುವಾಗ ಹೇಳತಕ್ಕದ್ದೇನು!</verse>
				<verse number="22">ಆದರೂ ಸ್ತ್ರೀಪುರುಷರಲ್ಲಿ ಕೆಲವರು ಹೇಗೋ ತಪ್ಪಿಸಿಕೊಂಡು ಉಳಿದು ಅಲ್ಲಿಂದ ಒಯ್ಯಲ್ಪಡುವರು; ಅವರು ನಿಮ್ಮ ಬಳಿ ಸೇರಿದಾಗ ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ಕಂಡು, ನಾನು ಜೆರುಸಲೇಮಿನ ಮೇಲೆ ಬರಮಾಡಿದ ಕೇಡಿನ ವಿಷಯವಾಗಿ ಅದಕ್ಕೆ ಉಂಟುಮಾಡಿದ ಎಲ್ಲ ಕೇಡುಗಳ ವಿಷಯವಾಗಿ, ಸಮಾಧಾನ ಹೊಂದುವಿರಿ.</verse>
				<verse number="23">ನೀವು ಅವರ ದುರ್ಮಾರ್ಗ, ದುಷ್ಕೃತ್ಯಗಳನ್ನು ನೋಡುವಾಗ ಅವರಿಂದಲೇ ನಿಮಗೆ ಸಮಾಧಾನವಾಗುವುದು; ನಾನು ಜೆರುಸಲೇಮಿಗೆ ಮಾಡಿದ್ದೆಲ್ಲಾ ಕಾರಣವಿಲ್ಲದೆ ಮಾಡಿದ್ದಲ್ಲವೆಂದು ನಿಮಗೆ ಆಗ ತಿಳಿಯುವುದು. ಇದು ಸರ್ವೇಶ್ವರನಾದ ದೇವರ ನುಡಿ.”</verse>
			</chapter>
			<chapter number="15">
				<verse number="1">ಸರ್ವೇಶ್ವರ ನನಗೆ ಅನುಗ್ರಹಿಸಿದ ವಾಣಿ ಇದು:</verse>
				<verse number="2">“ನರಪುತ್ರನೇ, ವನವೃಕ್ಷಗಳಲ್ಲಿ ದ್ರಾಕ್ಷಾವೃಕ್ಷದ ವಿಶಿಷ್ಟತೆಯೇನು? ಕಾಡುಗಿಡಗಳ ಕಟ್ಟಿಗೆಗಿಂತ ದ್ರಾಕ್ಷಿಯ ಕಟ್ಟಿಗೆಯಲಿ ಹೆಚ್ಚಾದುದೇನು?</verse>
				<verse number="3">ದ್ರಾಕ್ಷಿಯ ಕಟ್ಟಿಗೆಯನ್ನು ಬಳಸಿ ಮಾಡುತ್ತಾರೆಯೆ ಏನನ್ನಾದರು? ಸಾಮಗ್ರಿಗಳನ್ನು ತಗಲಿಹಾಕಲು ಅದರಿಂದ ಮಾಡುತ್ತಾರೆಯೇ ಗೂಟವನ್ನಾದರು?</verse>
				<verse number="4">ಇಲ್ಲ, ಬೆಂಕಿಗೆ ಹಾಕುತ್ತಾರೆ. ಸೌದೆಯಾಗಿ, ಅದನ್ನು ಬೆಂಕಿ ಸುಟ್ಟುಬಿಡುತ್ತದೆ. ಅದರ ಎರಡು ಕೊನೆಗಳೂ ಇದ್ದಲಾಗುತ್ತವೆ. ಅದರ ಮಧ್ಯಭಾಗವು ಬಾರದು ಯಾವ ತರದ ಬಳಕೆಗು.</verse>
				<verse number="5">ಇದ್ದ ಹಾಗೆಯೆ ಇದ್ದಾಗ ಅದು ಬಾರಲಿಲ್ಲ ಯಾವ ಕೆಲಸಕ್ಕು. ಬೆಂಕಿಯಲ್ಲಿ ಸುಟ್ಟು ಇದ್ದಲಾದಾಗ ಯಾವುದಕ್ಕೆ ಬಂದೀತು?”</verse>
				<verse number="6">ಇಂತಿರಲು ಸರ್ವೇಶ್ವರನಾದ ದೇವರು ಹೇಳುವುದಿದು: “ವನವೃಕ್ಷಗಳಲ್ಲಿ ದ್ರಾಕ್ಷಾವೃಕ್ಷವನ್ನೆ ಅಗ್ನಿಗೆ ನಾನು ಸೌದೆಯನ್ನಾಗಿಸಿರುವಂತೆ ಕೊಟ್ಟಿರುವೆನು ಜೆರುಸಲೇಮನ್ನು ವಿನಾಶಕ್ಕೆ.</verse>
				<verse number="7">ನಾನವರ ಮೇಲಿಡುವೆನು ಕೋಪ ದೃಷ್ಟಿಯನ್ನು; ಬೆಂಕಿಯಿಂದ ತಪ್ಪಿಸಿಕೊಂಡರೂ ನುಂಗಿಬಿಡುವುದು ಅದು ಅವರನ್ನು. ನಾನವರ ಮೇಲೆ ಕೋಪ ದೃಷ್ಟಿಯನ್ನಿಟ್ಟಾಗ ನಾನೇ ಸರ್ವೇಶ್ವರನೆಂದು ನಿಮಗೆ ಮನದಟ್ಟಾಗುವುದು.</verse>
				<verse number="8">ಅವರು ದ್ರೋಹ ಮಾಡಿದ್ದರಿಂದ ನಾಡು ಕಾಡಾಗುವುದು ನನ್ನಿಂದ.” ಇದು ಸರ್ವೇಶ್ವರನಾದ ದೇವರ ನುಡಿ.</verse>
			</chapter>
			<chapter number="16">
				<verse number="1">ಆಮೇಲೆ ಸರ್ವೇಶ್ವರ ನನಗೆ ದಯಪಾಲಿಸಿದ ವಾಣಿ -</verse>
				<verse number="2">“ನರಪುತ್ರನೇ, ನೀನು ಜೆರುಸಲೇಮಿಗೆ ಅದರ ಅಸಹ್ಯಕಾರ್ಯಗಳನ್ನು ತಿಳಿಯಪಡಿಸಿ ಹೀಗೆ ನುಡಿ -</verse>
				<verse number="3">ಸರ್ವೇಶ್ವರ ದೇವರು ಜೆರುಸಲೇಮೆಂಬಾಕೆಗೆ ಈ ಮಾತನ್ನು ಹೇಳಿ ಕಳುಹಿಸಿದ್ದಾರೆ: “ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ, ಅದೇ ನಿನ್ನ ಜನ್ಮಭೂಮಿ. ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.</verse>
				<verse number="4">ನಿನ್ನ ಜನನವನ್ನು ಕುರಿತು ಏನು ಹೇಳಲಿ! ನೀನು ಹುಟ್ಟಿದ ದಿನದಂದು ಯಾರೂ ನಿನ್ನ ಹೊಕ್ಕಳು ಕೊಯ್ದು ಕಟ್ಟಲಿಲ್ಲ. ನಿನ್ನನ್ನು ನೀರಿನಿಂದ ತೊಳೆದು ಶುಚಿಮಾಡಲಿಲ್ಲ, ನಿನಗೆ ಉಪ್ಪನ್ನು ಸ್ವಲ್ಪವು ಸವರಲಿಲ್ಲ, ನಿನ್ನನ್ನು ಬಟ್ಟೆಯಲ್ಲಿ ಸುತ್ತಲೇ ಇಲ್ಲ.</verse>
				<verse number="5">ನಿನ್ನನ್ನು ಕಟಾಕ್ಷಿಸಿ, ಕರುಣಿಸಿ ಯಾರೂ ನಿನಗೆ ಇಂಥಾ ಸಹಾಯ ಮಾಡಲಿಲ್ಲ; ನಿನ್ನ ಜನನ ದಿವಸದಲ್ಲಿ ನೀನು ಹೇಸಿಗೆಯಾಗಿದ್ದೆ, ನಿನ್ನನ್ನು ಬಯಲಿನಲ್ಲಿ ಬಿಸಾಡಿಬಿಟ್ಟರು.</verse>
				<verse number="6">“ನಾನು ಹಾದುಹೋಗುತ್ತಾ, ನಿನ್ನ ರಕ್ತದಲ್ಲೇ ಹೊರಳಾಡುತ್ತಿದ್ದ ನಿನ್ನನ್ನು ನೋಡಿ, ‘ನೀನು ರಕ್ತದಿಂದ ಅಶುದ್ಧವಾಗಿದ್ದರೂ ಬದುಕು’ ಎಂದು ಹೇಳಿದೆ; ಹೌದು, ‘ನೀನು ರಕ್ತದಿಂದ ಅಶುದ್ಧವಾಗಿದ್ದರೂ ಬದುಕು’ ಎಂದು ಹೇಳಿ ಬದುಕಿಸಿದೆ.</verse>
				<verse number="7">ಭೂಮಿಯಲ್ಲಿ ಮೊಳಕೆಯನ್ನೋ ಎಂಬಂತೆ ನಾನು ನಿನ್ನನ್ನು ಬೆಳೆಯಿಸಿದೆ; ನೀನು ಬಲಿತು ಪ್ರಾಯ ತುಂಬಿ ಅತಿ ಸುಂದರಿಯಾದೆ; ನಿನಗೆ ಸ್ತನಗಳು ಮೂಡಿದವು. ನಿನ್ನ ಕೂದಲು ಉದ್ದವಾಯಿತು; ಆದರೆ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿದ್ದೆ.</verse>
				<verse number="8">“ನಾನು ಪುನಃ ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದೆ; ಆಗ ನಾನು ನನ್ನ ಹೊದಿಕೆಯ ಸೆರಗನ್ನು ನಿನಗೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ; ಇದಲ್ಲದೆ ನಾನು ನಿನಗೆ ಮಾತುಕೊಟ್ಟು ಒಡಂಬಡಿಕೆ ಮಾಡಿಕೊಂಡೆ. ಆದ್ದರಿಂದ ನೀನು ನನ್ನವಳಾದೆ; ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="9">“ಆಗ ನಾನು ನೀರಿನಲ್ಲಿ ನಿನಗೆ ಸ್ನಾನ ಮಾಡಿಸಿ, ನಿನ್ನ ಮೇಲಿನ ರಕ್ತವನ್ನು ತೊಳೆದುಬಿಟ್ಟು, ನಿನಗೆ ತೈಲವನ್ನು ಹಚ್ಚಿದೆ.</verse>
				<verse number="10">ಇದಲ್ಲದೆ ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲು ಹಂದಿಯ ತೊಗಲಿನ ಕೆರಗಳನ್ನು ನಿನ್ನ ಕಾಲಿಗೆ ಮೆಟ್ಟಿಸಿ, ನಯವಾದ ನಾರುಮಡಿಯನ್ನು ನಿನಗೆ ಉಡಿಸಿ, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆ.</verse>
				<verse number="11">ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು,</verse>
				<verse number="12">ಕೊರಳಿಗೆ ಮಾಲೆಯನ್ನು, ಮೂಗಿಗೆ ಮೂಗುತಿಯನ್ನು, ಶಿರಸ್ಸಿಗೆ ಸುಂದರ ಕಿರೀಟವನ್ನು ಇಟ್ಟು, ನಿನ್ನನ್ನು ಆಭರಣಗಳಿಂದ ಸಿಂಗರಿಸಿದೆ.</verse>
				<verse number="13">ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ವಸ್ತ್ರ; ನಿನ್ನ ಆಹಾರವು ಗೋದಿಹಿಟ್ಟು, ಜೇನುತುಪ್ಪ ಮತ್ತು ಎಣ್ಣೆ; ನಿನ್ನ ಲಾವಣ್ಯವು ಅತಿ ಮನೋಹರ; ನೀನು ಹೀಗೆ ವೃದ್ಧಿಗೊಂಡು ರಾಣಿಯಾದೆ.</verse>
				<verse number="14">ನಾನು ನಿನಗೆ ಅನುಗ್ರಹಿಸಿದ ನಿನ್ನ ವೈಭವದಿಂದ ನಿನ್ನ ಸೌಂದರ್ಯ ಪರಿಪೂರ್ಣವಾಯಿತು; ನಿನ್ನ ಚೆಲುವು ಜನಾಂಗಗಳಲ್ಲಿ ಪ್ರಸಿದ್ಧವಾಯಿತು; ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="15">“ಆದರೆ ನೀನು ನಿನ್ನ ಸೌಂದರ್ಯವನ್ನೇ ನೆಚ್ಚಿಕೊಂಡೆ, ‘ನಾನು ಪ್ರಸಿದ್ಧಳಾದೆ’ ಎಂದು ಉಬ್ಬಿಕೊಂಡು ಸೂಳೆತನಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ಹಾದರಮಾಡಿದೆ. ಒಬ್ಬೊಬ್ಬನಿಗೂ ಒಳಗಾದೆ.</verse>
				<verse number="16">ನೀನು ಪುಣ್ಯಕ್ಷೇತ್ರಗಳನ್ನು ನಿರ್ಮಿಸಿ, ನಿನ್ನ ನಾನಾ ಶೈಲಿಯ ವಸ್ತ್ರಗಳಿಂದ ಅವುಗಳನ್ನು ಅಲಂಕರಿಸಿ, ಹಿಂದೆಂದೂ ನಡೆಯದಂತಹ, ಮುಂದೆ ಎಂದೂ ನಡೆಯಬಾರದಂತಹ ವ್ಯಭಿಚಾರವನ್ನು ನಡೆಸಿದೆ.</verse>
				<verse number="17">ನಾನು ನನ್ನ ಬೆಳ್ಳಿಬಂಗಾರದಿಂದ ನಿನಗೆ ಮಾಡಿಸಿಕೊಟ್ಟಿದ್ದ ಅಂದಚೆಂದವಾದ ಆಭರಣಗಳನ್ನು ತೆಗೆದು, ಅವುಗಳಿಂದ ಪುರುಷಮೂರ್ತಿಗಳನ್ನು ರೂಪಿಸಿಕೊಂಡು, ಅವುಗಳೊಡನೆ ಹಾದರ ಮಾಡಿದೆ;</verse>
				<verse number="18">ನಿನ್ನ ಕಸೂತಿಯ ವಸ್ತ್ರಗಳನ್ನು ತೆಗೆದು ಮೂರ್ತಿಗಳಿಗೆ ಹೊದಿಸಿ, ಅವುಗಳಿಗೆ ನನ್ನ ತೈಲವನ್ನೂ ನನ್ನ ಧೂಪವನ್ನೂ ಅರ್ಪಿಸಿದೆ.</verse>
				<verse number="19">ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು, ಇವುಗಳನ್ನೂ, ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದೆ; ಅಯ್ಯೋ, ನಿನಗೆ ಕೇಡು! ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="20">“ಇದಲ್ಲದೆ ನೀನು ನನಗೆ ಹೆತ್ತ ಗಂಡು ಹೆಣ್ಣು ಮಕ್ಕಳನ್ನು ಹಿಡಿದು ಮೂರ್ತಿಗಳಿಗೆ ಆಹಾರವಾಗಲೆಂದು ಯಜ್ಞವಾಗಿ ಅರ್ಪಿಸಿದೆ.</verse>
				<verse number="21">ನಿನ್ನ ಈ ಸೂಳೆತನ ಅಲ್ಪಕಾರ್ಯವೆಂದು ಭಾವಿಸಿದೆಯೋ? ಅದನ್ನು ಮೀರಿಸಬೇಕೆಂದು ನೀನು ನನ್ನ ಮಕ್ಕಳನ್ನು ಹತಿಸಿ ಮೂರ್ತಿಗಳಿಗೆ ಆಹುತಿಯಾಗಿಟ್ಟೆ!</verse>
				<verse number="22">ಈ ನಿನ್ನ ಅಸಹ್ಯಕಾರ್ಯಗಳನ್ನೂ ಸೂಳೆತನವನ್ನೂ ನೀನು ಪದೇ ಪದೇ ನಡಿಸುತ್ತಿದ್ದಾಗ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿ ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದ ನಿನ್ನ ಎಳೆತನವನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.</verse>
				<verse number="23">ಅಯ್ಯೋ, ನಿನಗೆ ಧಿಕ್ಕಾರ! ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="24">“ನೀನು ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿದ್ದಲ್ಲದೆ ಪ್ರತಿಯೊಂದು ಚೌಕದಲ್ಲಿ ಮಂಟಪವನ್ನು ಮಾಡಿ ಜಗಲಿಯನ್ನು ಕಟ್ಟಿಕೊಂಡಿರುವೆ.</verse>
				<verse number="25">ಒಂದೊಂದು ಬೀದಿಯ ಕೊನೆಯಲ್ಲಿ ನೀನು ಜಗಲಿಯನ್ನು ಕಟ್ಟಿಕೊಂಡು, ನಿನ್ನ ಸೌಂದರ್ಯವನ್ನು ನೀಚಕೆಲಸಕ್ಕೆ ಒಪ್ಪಿಸಿ, ಹಾದುಹೋಗುವವರೆಲ್ಲರನ್ನೂ ಸೇರಿ ಸೂಳೆತನವನ್ನು ಅಧಿಕಗೊಳಿಸಿರುವೆ.</verse>
				<verse number="26">ನಿನ್ನ ನೆರೆಯವರೂ ಅತಿಕಾಮಿಗಳೂ ಆದ ಈಜಿಪ್ಟರೊಂದಿಗೆ ಸಹ ನೀನು ಕಲೆತು ಹೆಚ್ಚಾಗಿ ಹಾದರಮಾಡಿ ನನ್ನನ್ನು ಕೆರಳಿಸಿರುವೆ.</verse>
				<verse number="27">“ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನ ಆಹಾರವನ್ನು ಕಡಿಮೆಮಾಡಿದೆ; ನಿನ್ನನ್ನು ದ್ವೇಷಿಸಿ, ನಿನ್ನ ಕೆಟ್ಟನಡತೆಗೆ ಅಸಹ್ಯಪಡುವ ಪಿಲಿಷ್ಟಿಯ ಕುವರಿಯರ ಕೈಗೆ ನಿನ್ನನ್ನು ಒಪ್ಪಿಸಿದೆ.</verse>
				<verse number="28">“ಇಷ್ಟೂ ಸಾಲದೆಂದು ನೀನು ಅಸ್ಸೀರಿಯರೊಂದಿಗೂ ಹಾದರಮಾಡಿದೆ; ಹೌದು, ಅವರೊಡನೆ ಹಾದರಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ.</verse>
				<verse number="29">ಇದಲ್ಲದೆ ನೀನು ವ್ಯಾಪಾರಸ್ಥರಾದ ಬಾಬಿಲೋನಿಯದವರೊಡನೆ ಸೇರಿ ಅಲ್ಲಿಯೂ ಬಹಳ ಸೂಳೆತನಮಾಡಿದೆ; ಆಗಲೂ ನಿನಗೆ ತೃಪ್ತಿಯಾಗಲಿಲ್ಲ.”</verse>
				<verse number="30">ಸರ್ವಶಕ್ತ ದೇವರು ಇಂತೆನ್ನುತ್ತಾರೆ: “ನಿನ್ನ ಮನಸ್ಸು ಮೋಹಪಾಶಕ್ಕೆ ಸಿಕ್ಕಿ ಎಷ್ಟೋ ಸೋತಿದೆ! ಇಷ್ಟೆಲ್ಲಾ ದುಷ್ಕೃತ್ಯಗಳನ್ನು ನಡೆಸಿ ಕಟ್ಟಿಲ್ಲದ ಜಾರಿಣಿಯಾಗಿರುವೆ.</verse>
				<verse number="31">ಒಂದೊಂದು ಬೀದಿಯ ಕೊನೆಯಲ್ಲೂ ನೀನು ಮಂಟಪವನ್ನು ಕಟ್ಟಿ ಎಲ್ಲಾ ಚೌಕಗಳಲ್ಲಿ ಜಗಲಿಯನ್ನು ಸ್ಥಾಪಿಸಿಕೊಂಡಿರುವೆ; ದೊರೆತದ್ದನ್ನು ಇದು ಕಡಿಮೆಯೆಂದು ತಿರಸ್ಕರಿಸುವ ಸೂಳೆಯಂತೆ ನೀನು ನಡೆಯುವವಳಲ್ಲ.</verse>
				<verse number="32">ನೀನು ಸೂಳೆತನಮಾಡುವ ಪತಿವ್ರತೆ; ಗಂಡನಿಗೆ ಬದಲಾಗಿ ಅನ್ಯರನ್ನು ಸೇರುವ ಜಾರಿಣಿ!</verse>
				<verse number="33">ಸಾಮಾನ್ಯವಾಗಿ ಸೂಳೆಯರಿಗೆ ಹಣ ಕೊಡುವುದುಂಟು; ನೀನಾದರೋ ನಿನ್ನ ಎಲ್ಲಾ ಮಿಂಡರಿಗೆ ನೀನೇ ಹಣ ನೀಡುತ್ತಿರುವೆ. ಅವರು ಎಲ್ಲ ಕಡೆಯಿಂದಲೂ ಬಂದು ನಿನ್ನಲ್ಲಿ ವ್ಯಭಿಚಾರಮಾಡುವಂತೆ ಅವರಿಗೆ ಬಹುಮಾನ ಕೊಡುತ್ತಿರುವೆ.</verse>
				<verse number="34">ನಿನ್ನ ಸೂಳೆತನಕ್ಕೂ ಇತರ ವೇಶ್ಯೆಯರ ಸೂಳೆತನಕ್ಕೂ ವ್ಯತ್ಯಾಸವುಂಟು; ನಿನ್ನಲ್ಲಿ ವ್ಯಭಿಚಾರಮಾಡಲಿಕ್ಕೆ ಯಾರೂ ನಿನ್ನ ಹಿಂದೆ ಬಾರರು; ನೀನೇ ಕೊಡುತ್ತೀಯೇ ಹೊರತು ನಿನಗೇನೂ ಸಿಕ್ಕದು; ನಿನ್ನ ದುರಾಚಾರ ಹೇಳತೀರದು!”</verse>
				<verse number="35">ಹೀಗಿರಲು ಎಲೌ ಜಾರಿಣಿಯೇ, ಸರ್ವೇಶ್ವರನ ಈ ವಾಕ್ಯವನ್ನು ಕೇಳು: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ:</verse>
				<verse number="36">“ಆಹಾ, ಮಿತಿಮೀರಿದ ನಿನ್ನ ಕಾಮಾತುರ! ನಿನ್ನಲ್ಲಿ ವ್ಯಭಿಚಾರಮಾಡಿದ ನಿನ್ನ ಮಿಂಡರ ಮೂಲಕ ನಿನಗಾದ ಮಾನಭಂಗ, ನಿನ್ನ ಎಲ್ಲ ಅಸಹ್ಯವಿಗ್ರಹಗಳು, ನೀನು ಅವುಗಳಿಗೆ ಅರ್ಪಿಸಿದ ನಿನ್ನ ಮಕ್ಕಳ ರಕ್ತ,</verse>
				<verse number="37">ಇವುಗಳನ್ನು ನಾನು ನೋಡಿ, ನೀನು ರಮಿಸಿದ ನಿನ್ನ ಎಲ್ಲ ಮಿಂಡರನ್ನೂ, ನೀನು ಮೋಹಿಸಿದ ಸಮಸ್ತ ಜಾರರನ್ನೂ, ನೀನು ಹಗೆಮಾಡಿದ ಎಲ್ಲರನ್ನೂ, ಸುತ್ತುಮುತ್ತಲು ನಿನಗೆ ವಿರುದ್ಧ ಒಟ್ಟುಗೂಡಿಸಿ, ಅವರ ಕಣ್ಣೆದುರಿಗೆ ನಿನ್ನನ್ನು ಬೆತ್ತಲೆಗೈದು ನಿನ್ನ ಮಾನವನ್ನು ಬಟ್ಟಬಯಲು ಮಾಡುವೆನು.</verse>
				<verse number="38">ವ್ಯಭಿಚಾರಮಾಡುವಂಥ, ರಕ್ತ ಹರಿಸುವಂಥ ಹೆಂಗಸರಿಗೆ ವಿಧಿಸತಕ್ಕ ದಂಡನೆಗಳನ್ನು ನಾನು ನಿನಗೆ ವಿಧಿಸಿ ನನ್ನ ಕೋಪೋದ್ರೇಕವನ್ನೂ ರೋಷಾವೇಶವನ್ನೂ ರಕ್ತದಂತೆ ನಿನ್ನ ಮೇಲೆ ಸುರಿಸುವೆನು.</verse>
				<verse number="39">ನಾನು ನಿನ್ನನ್ನು ಸುತ್ತಲಿನವರ ಕೈವಶಮಾಡುವೆನು; ಅವರು ನಿನ್ನ ಮಂಟಪವನ್ನು ಕೆಡವಿ, ನಿನ್ನ ಜಗಲಿಗಳನ್ನು ಒಡೆದು, ನಿನ್ನ ಬಟ್ಟೆಗಳನ್ನು ಕಿತ್ತು, ನಿನ್ನ ಒಡವೆಗಳನ್ನು ಸುಲಿದುಕೊಂಡು, ನಿನ್ನನ್ನು ಬಟ್ಟಬರಿದಾಗಿ ಬಿಟ್ಟುಹೋಗುವರು.</verse>
				<verse number="40">“ಅವರು ನಿನ್ನ ವಿಷಯದಲ್ಲಿ ನ್ಯಾಯಸಭೆಯನ್ನು ಕೂಡಿಸಿ, ನಿನ್ನನ್ನು ಕಲ್ಲೆಸೆದು ಕೊಲ್ಲುವರು; ಕತ್ತಿಗಳಿಂದ ತುಂಡರಿಸುವರು.</verse>
				<verse number="41">ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ಮಾಡುವೆನು; ನೀನು ನಿನ್ನ ಮಿಂಡರಿಗೆ ಇನ್ನು ಬಹುಮಾನ ತರದಂತೆಮಾಡುವೆನು.</verse>
				<verse number="42">ಹೀಗೆ ನಾನು ನಿನ್ನ ಮೇಲಣ ಸಿಟ್ಟನ್ನು ತೀರಿಸುವೆನು. ಆಗ ನನ್ನ ರೋಷವು ನಿನ್ನಿಂದ ದೂರವಾಗುವುದು; ನಾನು ಶಾಂತನಾಗಿ ಇನ್ನು ಮೇಲೆ ಕೋಪಗೊಳ್ಳೆನು.</verse>
				<verse number="43">ನೀನು ನಿನ್ನ ಯೌವನಕಾಲವನ್ನು ನೆನೆಸಿಕೊಳ್ಳದೆ, ಈ ದುಷ್ಕೃತ್ಯಗಳನ್ನೆಲ್ಲಾ ನಡೆಸಿ, ನನ್ನನ್ನು ರೇಗಿಸಿದ್ದರಿಂದ ಇಗೋ, ನಾನು ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು; ನೀನು ಲೆಕ್ಕವಿಲ್ಲದ ದುರಾಚಾರಗಳನ್ನು ನಡೆಸಿದ್ದಲ್ಲದೆ ಈ ಅಸಹ್ಯಕಾರ್ಯವನ್ನೂ ಮಾಡಿರುವೆ. ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="44">“ಗಾದೆಗಳಲ್ಲಿ ಜಾಣರು ‘ತಾಯಿಯಂತೆ ಮಗಳು’ ಎಂಬ ಗಾದೆಯನ್ನು ನಿನ್ನ ಬಗ್ಗೆ ಖಂಡಿತವಾಗಿ ನುಡಿಯುವರು.</verse>
				<verse number="45">ಗಂಡನನ್ನೂ ಮಕ್ಕಳನ್ನೂ ಅಸಹ್ಯವಾಗಿ ಕಂಡ ನಿನ್ನ ತಾಯಿಗೆ ನೀನು ತಕ್ಕ ಮಗಳು; ಗಂಡನನ್ನೂ ಮಕ್ಕಳನ್ನೂ ಬೇಸರ ಪಡಿಸಿದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ; ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.</verse>
				<verse number="46">“ನಿನ್ನ ಉತ್ತರಕ್ಕೆ ತನ್ನ ಕುವರಿಯರೊಂದಿಗೆ ವಾಸಿಸುವ ಸಮಾರಿಯ, ನಿನ್ನ ಅಕ್ಕ; ನಿನ್ನ ದಕ್ಷಿಣ ಕಡೆಯಲ್ಲಿ ಕುವರಿಯರೊಂದಿಗೆ ವಾಸಿಸುವ ಸೊದೋಮ್, ನಿನ್ನ ತಂಗಿ.</verse>
				<verse number="47">“ಆದರೆ ನೀನು ನಡೆದ ದುರ್ಮಾರ್ಗ ಅವರು ನಡೆದಂಥದಲ್ಲ. ನಿನ್ನ ಅಸಹ್ಯಕಾರ್ಯಗಳು ಅವರು ನಡೆಸಿದಂಥವುಗಳಲ್ಲ. ಅವರ ದುರ್ನಡತೆ ಅತ್ಯಲ್ಪವೆಂದು ಸರ್ವದಾ ಅವರಿಗಿಂತ ಬಹುಕೆಟ್ಟವಳಾಗಿ ನಡೆದುಕೊಂಡೆ.</verse>
				<verse number="48">ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನೀನೂ ನಿನ್ನ ಕುವರಿಯರೂ ನಡೆದಂತೆ ಸೊದೋಮೆಂಬ ನಿನ್ನ ತಂಗಿಯಾಗಲಿ ಆಕೆಯ ಕುವರಿಯರಾಗಲಿ ನಡೆಯಲಿಲ್ಲ.</verse>
				<verse number="49">ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಗರ್ವಪಡುವುದು, ಹೊಟ್ಟೆ ತುಂಬಿಸಿಕೊಳ್ಳುವುದು, ಸ್ವಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಆಕೆಯ ಕುವರಿಯರಲ್ಲೂ ಇದ್ದವು. ಅಲ್ಲದೆ ಅವರು ದೀನದಲಿತರಿಗೆ ಬೆಂಬಲವಾಗಿರಲಿಲ್ಲ.</verse>
				<verse number="50">ಅವರು ಸೊಕ್ಕೇರಿ ನನ್ನ ಕಣ್ಣೆದುರಿಗೆ ಅಸಹ್ಯಾಚಾರಗಳನ್ನು ನಡೆಸಿದರು; ನಾನು ಅದನ್ನು ನೋಡಿ ಅವರನ್ನು ನಿರ್ಮೂಲಮಾಡಿದೆ.</verse>
				<verse number="51">“ಸಮಾರಿಯ ಎಂಬಾಕೆ ಕೂಡ ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕ ಅಸಹ್ಯಕಾರ್ಯಗಳನ್ನು ನಡೆಸಿರುವೆ; ನೀನು ಮಾಡಿದ ಲೆಕ್ಕವಿಲ್ಲದ ದುರಾಚಾರಗಳಿಂದ ಅವರನ್ನು ನಿರ್ದೋಷಿಗಳೆಂದು ತೋರ್ಪಡಿಸಿರುವೆ.</verse>
				<verse number="52">ನಿನ್ನ ದೋಷಗಳೇ ನಿನ್ನ ಅಕ್ಕತಂಗಿಯರ ಪರವಾಗಿ ನಿಂತದ್ದರಿಂದ ನೀನು ನಾಚಿಕೆಪಡಬೇಕು; ಅವರಿಗಿಂತ ಅಧಿಕವಾಗಿ ನೀನು ಅಸಹ್ಯ ಪಾಪಗಳನ್ನು ಮಾಡಿರುವುದರಿಂದ ಅವರು ನಿನಗಿಂತ ಉತ್ತಮರಾಗಿದ್ದಾರೆ. ಹೌದು, ನಿನ್ನ ಅಕ್ಕತಂಗಿಯರನ್ನು ನಿರ್ದೋಷಿಗಳೆಂದು ತೋರ್ಪಡಿಸಿದ್ದಕ್ಕಾಗಿ ಲಜ್ಜೆಪಡು, ನಾಚಿಕೆಪಡು.</verse>
				<verse number="53">“ಸೊದೋಮ್ ಮತ್ತು ಆಕೆಯ ಕುವರಿಯರ ಹಾಗೂ ಸಮಾರಿಯ ಮತ್ತು ಆಕೆಯ ಕುವರಿಯರ ಸೌಭಾಗ್ಯವನ್ನು ಪುನಃ ನೀಡುವೆನು. ಅದರೊಂದಿಗೆ ನಿನ್ನ ಸೌಭಾಗ್ಯವನ್ನೂ ಮರಳಿಸುವೆನು.</verse>
				<verse number="54">ಹೀಗಿರಲು, ನೀನು ನಿನ್ನ ಲೆಕ್ಕವಿಲ್ಲದ ದುಷ್ಕೃತ್ಯಗಳ ಮೂಲಕ ಅವರನ್ನು ಸಂತೈಸಿದ್ದರಿಂದ ಲಜ್ಜೆಪಡುವೆ, ನಾಚಿಕೆಪಡುವೆ.</verse>
				<verse number="55">ಆಗ ಸಮಾರಿಯ ಮತ್ತು ಸೊದೋಮ್ ಎಂಬ ನಿನ್ನ ಅಕ್ಕತಂಗಿಯರನ್ನೂ ಅವರ ಕುವರಿಯರನ್ನೂ ನಿನ್ನನ್ನೂ ನಿಮ್ಮ ಪೂರ್ವಸ್ಥಿತಿಗೆ ತರುವೆ.</verse>
				<verse number="56">ಅರಾಮಿನ ಕುವರಿಯರು ಆಕೆಯ ಸುತ್ತಮುತ್ತಲಿನ ಸಮಸ್ತರು, ನಿನ್ನನ್ನು ಎಲ್ಲೆಲ್ಲೂ ಹೀನೈಸುತ್ತಿರುವ ಫಿಲಿಷ್ಟಿಯದ ಕುವರಿಯರು, ಇವರೆಲ್ಲರ ದೂಷಣೆಗೆ ನೀನು ಗುರಿಯಾಗುವುದಕ್ಕೆ ಮುಂಚೆ, ನಿನ್ನ ಕೆಟ್ಟತನವು ಬೆಳಕಿಗೆ ಬರುವುದಕ್ಕೆ ಮೊದಲು,</verse>
				<verse number="57">ನೀನು ಗರ್ವಪಡುತ್ತಿದ್ದ ಆ ಕಾಲದಲ್ಲಿ ಸೊದೋಮೆಂಬ ನಿನ್ನ ತಂಗಿಯ ಹೆಸರು ನಿನ್ನ ಬಾಯಲ್ಲಿ ಬರಲೇ ಇಲ್ಲ;</verse>
				<verse number="58">ಈಗ ನಿನ್ನ ದುರ್ನಡತೆಯ ಮತ್ತು ದುರಾಚಾರಗಳ ಫಲವನ್ನು ಅವಳಂತೆ ಅನುಭವಿಸಬೇಕಾಗಿ ಬಂತು.” ಇದು ಸರ್ವೇಶ್ವರನ ನುಡಿ.</verse>
				<verse number="59">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ನೀನು ಒಡಂಬಡಿಕೆಯನ್ನು ಮೀರಿ ನಿನ್ನ ಆಣೆಯನ್ನು ತಿರಸ್ಕರಿಸಿದೆ. ನೀನು ಮಾಡಿದ್ದಕ್ಕೆ ತಕ್ಕದ್ದನ್ನು ನಾನು ನಿನಗೆ ಮಾಡುವೆನು.</verse>
				<verse number="60">ಆದರೂ ನಾನು ನಿನ್ನ ಯೌವನಕಾಲದಲ್ಲಿ ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ನಿನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡು ದೃಢೀಕರಿಸುವೆನು.</verse>
				<verse number="61">ಇದಕ್ಕನುಸಾರ ನಾನು ಕುವರಿಯನ್ನೋ ಎಂಬಂತೆ ನಿನಗೆ ದಯಪಾಲಿಸುವ ನಿನ್ನ ಅಕ್ಕಂದಿರೂ ತಂಗಿಯರೂ ನಿನ್ನಲ್ಲಿ ಸೇರಿಕೊಳ್ಳುವರು. ಆಗ ನೀನು ನಿನ್ನ ದುರ್ಮಾರ್ಗಗಳನ್ನು ನೆನಸಿಕೊಂಡು ನಾಚಿಕೆಪಡುವೆ; ಈ ನನ್ನ ದಯೆ ನಿನ್ನ ಹಿಂದಿನ ಒಡಂಬಡಿಕೆಯ ಫಲವಲ್ಲ.</verse>
				<verse number="62">ನಾನು ಈ ಒಡಂಬಡಿಕೆಯನ್ನು ನಿನ್ನೊಂದಿಗೆ ಮಾಡಿಕೊಳ್ಳುವಾಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.</verse>
				<verse number="63">ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ನೆನಪಿಗೆ ತಂದು ನಾಚಿಕೆಪಟ್ಟು, ನಿನಗಾದ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವೆ.” ಇದು ಸರ್ವೇಶ್ವರನಾದ ದೇವರ ನುಡಿ.</verse>
			</chapter>
			<chapter number="17">
				<verse number="1">ಸರ್ವೇಶ್ವರ ನನಗೆ ಅನುಗ್ರಹಿಸಿದ ವಾಣಿ:</verse>
				<verse number="2">“ನರಪುತ್ರನೇ, ನೀನು ಇಸ್ರಯೇಲ್ ವಂಶದವರಿಗೆ ಈ ಸಾಮತಿಯನ್ನು ಒಗಟಾಗಿ ಹೇಳು -</verse>
				<verse number="3">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಗಲ ಹಾಗು ಉದ್ದವಾದ ರೆಕ್ಕೆಗಳುಳ್ಳ ವಿವಿಧ ವರ್ಣದ ಗರಿಗಳಿಂದ ಕೂಡಿದ ದೊಡ್ಡ ಹದ್ದೊಂದು ಲೆಬನೋನಿಗೆ ಬಂದು ದೇವದಾರು ಮರದ ಮೇಲ್ತುದಿಯ ರೆಂಬೆಯನ್ನು ಕಿತ್ತಿತು;</verse>
				<verse number="4">ತುಟ್ಟತುದಿಯ ಚಿಗುರುಗಳನ್ನು ಕಚ್ಚಿ ವಾಣಿಜ್ಯ ದೇಶಕ್ಕೆ ತೆಗೆದುಕೊಂಡುಹೋಗಿ ಬಹುಮಂದಿ ವರ್ತಕರಿರುವ ಪಟ್ಟಣದಲ್ಲಿ ಇಟ್ಟುಬಿಟ್ಟಿತು.</verse>
				<verse number="5">ಆಮೇಲೆ ಅದು ಆ ದೇವದಾರು ಇದ್ದ ದೇಶದ ಒಂದು ಬೀಜವನ್ನು ತೆಗೆದುಕೊಂಡು ಫಲವತ್ತಾದ ನೀರಾವರಿಯ ಭೂಮಿಯಲ್ಲಿ ನೆಟ್ಟು ನೀರವಂಜಿಯ ಹಾಗೆ ಬೆಳೆಸಿತು.</verse>
				<verse number="6">ಅದು ಗುಜ್ಜಾಗಿ ಬೆಳೆದು ದ್ರಾಕ್ಷಾಲತೆಯಾಗಿ ವಿಶಾಲವಾಗಿ ಹರಡಿಕೊಂಡು, ತನ್ನ ರೆಂಬೆಗಳನ್ನು ಆ ಹದ್ದಿನ ಕಡೆಗೆ ಚಾಚಿ, ಅದರ ಕೆಳಗೂ ಬೇರು ಬಿಟ್ಟಿತು; ಅದು ಲತೆಯಾಗಿ ಬೆಳೆದು, ರೆಂಬೆಗಳನ್ನು ಹರಡಿಸಿ, ಚಿಗುರುಗಳನ್ನು ಹೊರಡಿಸಿತು.</verse>
				<verse number="7">“ಆದರೆ ಅಗಲವಾದ ರೆಕ್ಕೆಗಳುಳ್ಳ ಗರಿತುಂಬಿದ ಮತ್ತೊಂದು ದೊಡ್ಡ ಹದ್ದು ಇತ್ತು; ಇಗೋ, ಆ ದ್ರಾಕ್ಷಾಲತೆ ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ, ತನ್ನ ರೆಂಬೆಗಳನ್ನು ಚಾಚಿ ಅದರಿಂದ ನೀರನ್ನು ಹಾಯಿಸುತ್ತಿತ್ತು.</verse>
				<verse number="8">ಅದು ಸೊಂಪಾದ ಲತೆಯಾಗಿ ರೆಂಬೆಗಳನ್ನು ಹರಡಿಸಿ, ಫಲಕೊಡುವುದಕ್ಕೆ ಅನುಕೂಲವಾದ ಒಳ್ಳೆಯ ನೀರಾವರಿಯ ನೆಲದಲ್ಲಿ ನಾಟಿಕೊಂಡಿತ್ತು.”</verse>
				<verse number="9">“ಈ ಮಾತನ್ನು ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅದು ಯಾವಾಗಲು ಸಮೃದ್ಧವಾಗಿಯೆ ಇರುವುದೇ? ಅದನ್ನು ನಾಟಿದ ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಫಲವನ್ನು ಕಡಿದುಬಿಡುವುದು. ಆಗ ಅದು ಒಣಗಿ ಅದರ ಹಸುರೆಲೆಗಳೆಲ್ಲಾ ಬಾಡುವುದಲ್ಲವೆ? ಅದನ್ನು ಬೇರುಸಹಿತ ಕೀಳಲು ಹೆಚ್ಚು ಬಲಬೇಕಾಗಿಲ್ಲ, ಬಹುಜನರ ಅಗತ್ಯವಿಲ್ಲ</verse>
				<verse number="10">ನಾಟಿಕೊಂಡಿದ್ದ ಆ ಲತೆ ಸಮೃದ್ಧವಾಗಿಯೇ ಇರುವುದೇ? ಮೂಡಣಗಾಳಿ ಬಡಿಯುವಾಗ ಅದು ಖಂಡಿತವಾಗಿ ಬಾಡುವುದಲ್ಲವೆ? ಬೆಳೆದ ಪಾತಿಯಲ್ಲಿಯೇ ಅದು ಒಣಗಿಹೋಗುವುದಲ್ಲವೆ?”</verse>
				<verse number="11">ಸರ್ವೇಶ್ವರ ದಯಪಾಲಿಸಿದ ಇನ್ನೊಂದು ವಾಣಿ:</verse>
				<verse number="12">“ದ್ರೋಹಿವಂಶದ ಈ ಜನರಿಗೆ ಹೀಗೆ ಹೇಳು - ಇದರ ಅರ್ಥ ನಿಮಗೆ ತಿಳಿಯಲಿ; ಇಗೋ, ಬಾಬಿಲೋನಿನ ಅರಸನು ಜೆರುಸಲೇಮಿಗೆ ಬಂದು ಅಲ್ಲಿನ ಅರಸನನ್ನೂ ಪ್ರಧಾನರನ್ನೂ ಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋದ;</verse>
				<verse number="13">ಮತ್ತು ರಾಜವಂಶದವನೊಬ್ಬನನ್ನು ಆರಿಸಿ ಅವನೊಂದಿಗೆ ಒಪ್ಪಂದಮಾಡಿ ಅವನಿಂದ ಆಣೆಯಿಡಿಸಿದ.</verse>
				<verse number="14">ಅವನ ರಾಜ್ಯ ಏಳಿಗೆಗೆ ಬಾರದೆ ಗುಜ್ಜಾಗಿದ್ದು ಒಪ್ಪಂದಕ್ಕೆ ಬದ್ಧವಾಗಿರುವುದರಿಂದಲೇ ಅದು ನಿಲ್ಲದೆಂದು ಆ ದೇಶದ ಬಲಿಷ್ಠರನ್ನು ಗಡೀಪಾರುಮಾಡಿದ.</verse>
				<verse number="15">ಆದರೆ ಅವನು ಬಾಬಿಲೋನಿನ ಅರಸನ ವಿರುದ್ಧ ದಂಗೆಯೆದ್ದು ಕುದುರೆಗಳನ್ನೂ ಬಹುಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಈಜಿಪ್ಟಿಗೆ ರಾಯಭಾರಿಗಳನ್ನು ಕಳುಹಿಸಿದ. ಆದರೂ ಇವನು ಗೆಲ್ಲುವನೇ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೇ? ಒಪ್ಪಂದವನ್ನು ಮೀರಿದವನು ತಪ್ಪಿಸಿಕೊಂಡಾನೇ?</verse>
				<verse number="16">“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ಇವನು ಯಾವನಿಂದ ಅರಸನಾಗಿ ನೇಮಕಗೊಂಡನೋ, ಯಾವನಿಗೆ ಮಾಡಿದ ಪ್ರಮಾಣವನ್ನು ತಿರಸ್ಕರಿಸಿದನೋ, ಯಾವನ ಒಪ್ಪಂದವನ್ನು ಮೀರಿದನೋ, ಆ ಅರಸನ ಬಳಿಯಲ್ಲೆ, ಅಂದರೆ ಬಾಬಿಲೋನೆಂಬ ಅವನ ವಾಸಸ್ಥಾನದಲ್ಲೆ, ಇವನು ಸಾಯುವುದು ಖಂಡಿತ.</verse>
				<verse number="17">ಫರೋಹನೂ ಅವನ ಮಹಾಸೈನ್ಯವೂ ದೊಡ್ಡ ಪರಿವಾರವೂ ಬಂದು ಬಹುಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನು ಹಾಕಿ, ಬುರುಜುಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗದು.</verse>
				<verse number="18">ಏಕೆಂದರೆ ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಪ್ಪಂದವನ್ನೂ ಮೀರಿದನಲ್ಲವೇ? ಕೈಯ ಮೇಲೆ ಕೈಯಿಟ್ಟು ಭಾಷೆಮಾಡಿ ಪ್ರಯೋಜನವೇನು? ಅದನ್ನೆಲ್ಲಾ ಮುರಿದುಬಿಟ್ಟನಲ್ಲವೇ? ಇವನು ನನ್ನಿಂದ ಪಾರಾಗನು.</verse>
				<verse number="19">“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನನಗೆ ಮಾಡಿದ ಪ್ರಮಾಣವನ್ನು ಅವನು ತಿರಸ್ಕರಿಸಿ ನನ್ನ ಒಡಂಬಡಿಕೆಯನ್ನು ಮೀರಿದ ದೋಷವನ್ನು ಅವನ ತಲೆಯ ಮೇಲೆ ಹೊರಿಸುವೆನು.</verse>
				<verse number="20">ನಾನು ಅವನಿಗೆ ನನ್ನ ಬಲೆಯೊಡ್ಡುವೆನು; ನಾನು ಹಾಕಿದ ಉರುಳಿನಲ್ಲಿ ಸಿಕ್ಕಿಬೀಳುವನು. ಅವನನ್ನು ಬಾಬಿಲೋನಿಗೆ ತಂದು, ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.</verse>
				<verse number="21">ಅವನ ಸೇನೆಗಳೆಲ್ಲಾ ಚದರಿ ಓಡಿಹೋಗಿ, ಕತ್ತಿಯ ಬಾಯಿಗೆ ತುತ್ತಾಗುವುವು; ಉಳಿದವರನ್ನು ಎಲ್ಲ ಕಡೆಯ ಗಾಳಿಗೆ ತೂರಿಬಿಡುವೆನು; ಈ ಮಾತನ್ನು ಆಡಿದವನು ಸರ್ವೇಶ್ವರನಾದ ನಾನೇ ಎಂದು ನಿಮಗೆ ಗೊತ್ತಾಗುವುದು.”</verse>
				<verse number="22">ಸರ್ವೇಶ್ವರನಾದ ದೇವರ ವಾಣಿಯಿದು; ನಾನೇ ನೆಡುವೆನು ರೆಂಬೆಯೊಂದನು ಎತ್ತರದ ದೇವದಾರು ಮರದ ಮೇಲಿಂದ ತಂದು ತುಟ್ಟತುದಿಯ ಚಿಗುರುಗಳಲ್ಲೊಂದನ್ನು ತಂದು ಅತಿ ಕೋಮಲವಾದುದನ್ನು ಚಿವುಟಿ ತಂದು, ನೆಡುವೆನದನು ಉನ್ನತೋನ್ನತವಾದ ಪರ್ವತದಲ್ಲಿ.</verse>
				<verse number="23">ಹೌದು, ನೆಡುವೆನು ಇಸ್ರಯೇಲಿನಾ ಪರ್ವತಾಗ್ರದಲ್ಲಿ. ಆಗುವುದದು ಸೊಂಪಾದ ದೇವದಾರು ಮರ, ರೆಂಬೆಗಳನದು ಹರಡಿಕೊಂಡು ಕೊಡುವುದು ಫಲ. ಸಕಲವಿಧ ಪಕ್ಷಿಗಳು ವಾಸಿಸುವುವು ಅದರಲ್ಲಿ.</verse>
				<verse number="24">ಆಶ್ರಯ ಪಡೆವುವು ಅದರ ರೆಂಬೆಗಳ ನೆರಳಲಿ, ಆಗ ತಿಳಿವುವು ವನದ ವೃಕ್ಷಗಳು: ಎತ್ತರವಾದ ಮರಗಳ ತಗ್ಗಿಸುವವನು ತಗ್ಗಾದುದನು ಎತ್ತರಪಡಿಸುವವನು ಹಸುರಾದುದನು ಒಣಗಿಸುವವನು ಒಣಗಿದುದನು ಚಿಗುರಿಸುವವನು ಸರ್ವೇಶ್ವರ ನಾನೇ ಎಂದು ಇದ ನುಡಿದವ ನಾನು, ನುಡಿದುದನು ನಡೆಸುವವ ನಾನು.”</verse>
			</chapter>
			<chapter number="18">
				<verse number="1">ಸರ್ವೇಶ್ವರ ನನಗೆ ಅನುಗ್ರಹಿಸಿದ ವಾಣಿ:</verse>
				<verse number="2">“ಹೆತ್ತವರು ತಿಂದರು ಹುಳಿದ್ರಾಕ್ಷಿಯನ್ನು; ಚಳಿತುಹೋದವು ಅವರ ಮಕ್ಕಳ ಹಲ್ಲುಗಳು” ಎಂಬ ಗಾದೆಯನ್ನು ನೀವು ಇಸ್ರಯೇಲ್‍ ನಾಡನ್ನು ಕುರಿತು ಹೇಳುವುದೇಕೆ?</verse>
				<verse number="3">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಯೇಲಿನಲ್ಲಿ ಇನ್ನು ಎತ್ತಬೇಕಾಗುವುದಿಲ್ಲ.</verse>
				<verse number="4">ಇಗೋ, ಸಕಲ ನರಪ್ರಾಣಿಗಳು ನನ್ನವೇ; ತಂದೆಯೇನು, ಮಗನೇನು, ನರಪ್ರಾಣಿಗಳೆಲ್ಲವೂ ನನ್ನಧೀನದಲ್ಲಿವೆ; ಪಾಪಮಾಡುವ ಪ್ರಾಣಿಯೇ ಸಾಯುವನು.</verse>
				<verse number="5">“ಒಬ್ಬನು ಸದ್ಧರ್ಮಿಯಾಗಿ ನ್ಯಾಯನೀತಿಗಳನ್ನು ನಡೆಸಿ,</verse>
				<verse number="6">ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಾಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ,</verse>
				<verse number="7">ಮುಟ್ಟಿನ ಹೆಂಗಸನ್ನು ಕೂಡದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆ ಇರುವವನಿಗೆ ಹೊದಿಕೆಯನ್ನು ಹೊದಿಸಿ;</verse>
				<verse number="8">ಸಾಲಕ್ಕೆ ಬಡ್ಡಿ ತೆಗೆಯದೆ, ಲಾಭಕ್ಕೆ ಹಣಕೊಡದೆ, ಅನ್ಯಾಯಕ್ಕೆ ಕೈಹಾಕದೆ, ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,</verse>
				<verse number="9">ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಗೊಂಡು, ಸತ್ಯಪರನಾಗಿಯೇ ನಡೆದರೆ, ಇಂಥವನು ಸದ್ಧರ್ಮಿ. ಆದುದರಿಂದ ಅವನು ಜೀವಿಸುವುದು ನಿಶ್ಚಯ. ಇದು ಸರ್ವೇಶ್ವರನಾದ ದೇವರ ನುಡಿ:</verse>
				<verse number="10">ಇಂಥವನು ಪಡೆದ ಮಗನು, ಈಗ ಹೇಳಿದ ದುಷ್ಕೃತ್ಯಗಳಲ್ಲಿ ಯಾವುದನ್ನಾದರೂ ನಡೆಸಿ,</verse>
				<verse number="11">ಸುಕೃತ್ಯಗಳಲ್ಲಿ ಯಾವುದನ್ನೂ ನಡೆಸದೆ ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದು, ನೆರೆಯವನ ಹೆಂಡತಿಯನ್ನು ಕೆಡಿಸಿ,</verse>
				<verse number="12">ದೀನದಲಿತರನ್ನು ಹಿಂಸಿಸಿ, ಜನರ ಸೊತ್ತನ್ನು ಅಪಹರಿಸಿ, ಸಾಲಗಾರನ ಒತ್ತೆಯನ್ನು ಬಿಗಿಹಿಡಿದು, ವಿಗ್ರಹಗಳ ಕಡೆಗೆ ಕಣ್ಣೆತ್ತಿ,</verse>
				<verse number="13">ಅಸಹ್ಯಕಾರ್ಯವನ್ನು ಮಾಡಿ, ಸಾಲಕ್ಕೆ ಬಡ್ಡಿ ತೆಗೆದು, ಲಾಭಕ್ಕೆ ಹಣಕೊಟ್ಟು, ಹಿಂಸಾಚಾರಿಯೂ, ರಕ್ತಸುರಿಸುವವನೂ ಆಗಿದ್ದರೆ, ಜೀವಿಸುವನೇ? ಖಂಡಿತ ಜೀವಿಸನು; ಈ ದುರಾಚಾರಗಳನ್ನೆಲ್ಲಾ ನಡೆಸಿದನಲ್ಲವೇ? ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.</verse>
				<verse number="14">“ಇಗೋ, ಇವನು ಪಡೆದ ಮಗನು ತನ್ನ ತಂದೆ ಮಾಡಿದ ಪಾಪಗಳನ್ನೆಲ್ಲಾ ಕಂಡು ಭಯಪಟ್ಟು, ಇಂಥಾ ಕಾರ್ಯಗಳನ್ನು ನಡೆಸದೆ</verse>
				<verse number="15">ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿನ್ನದೆ, ಇಸ್ರಯೇಲ್ ವಂಶದವರ ವಿಗ್ರಹಗಳ ಕಡೆಗೆ ಕಣ್ಣೆತ್ತದೆ, ನೆರೆಯವನ ಹೆಂಡತಿಯನ್ನು ಕೆಡಿಸದೆ, ಯಾರನ್ನೂ ಹಿಂಸಿಸದೆ,</verse>
				<verse number="16">ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನವಿಕ್ಕಿ, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,</verse>
				<verse number="17">ಬಡವನ ಮೇಲೆ ಕೈಮಾಡದೆ, ಬಡ್ಡಿಯನ್ನು ಕೇಳದೆ, ಲಾಭಕ್ಕೆ ಹಣಕೊಡದೆ, ನನ್ನ ವಿಧಿಗಳನ್ನು ಆಚರಿಸಿ, ನನ್ನ ನಿಯಮಗಳನ್ನು ಅನುಸರಿಸಿದರೆ, ತನ್ನ ತಂದೆಯ ಅಧರ್ಮದ ನಿಮಿತ್ತ ಸಾಯನು, ಅವನು ಜೀವಿಸುವುದು ನಿಶ್ಚಯ.</verse>
				<verse number="18">ಇವನ ತಂದೆಯಾದರೊ ಸ್ವಕುಲದವರನ್ನು ಬಹಳವಾಗಿ ಅರೆದು, ಸುಲಿದು, ಸ್ವಜನರ ನಡುವೆ ಕೆಟ್ಟದ್ದನ್ನು ನಡೆಸಿದ ಕಾರಣ, ಇಗೋ, ತನ್ನ ಅಧರ್ಮದಿಂದಲೇ ಸಾಯುವನು.</verse>
				<verse number="19">“ಆದರೆ ನೀವು, - ‘ತಂದೆಯ ದೋಷಫಲವನ್ನು ಮಗನು ಹೇಗೆ ಅನುಭವಿಸುವುದಿಲ್ಲ?’ ಎಂದು ಆಕ್ಷೇಪಿಸುವಿರೋ? ಮಗನು ನೀತಿನ್ಯಾಯಗಳನ್ನು ನಡೆಸಿ ನನ್ನ ವಿಧಿಗಳನ್ನೆಲ್ಲಾ ಕೈಗೊಂಡು ಆಚರಿಸಿದರೆ ಖಂಡಿತ ಜೀವಿಸುವನು.</verse>
				<verse number="20">ಪಾಪಮಾಡುವವನೇ ಸಾಯುವನು. ಮಗನು ತಂದೆಯ ದೋಷಫಲವನ್ನು ಅನುಭವಿಸನು; ತಂದೆಯು ಮಗನ ದೋಷಫಲವನ್ನು ಅನುಭವಿಸನು; ಶಿಷ್ಟನ ಶಿಷ್ಟತನದ ಫಲವು ಶಿಷ್ಟನದೇ, ದುಷ್ಟನ ದುಷ್ಟತನದ ಫಲವು ದುಷ್ಟನದೇ.</verse>
				<verse number="21">“ಆದರೆ ದುಷ್ಟನು ತಾನು ಮಾಡುತ್ತಿದ್ದ ಪಾಪಗಳನ್ನೆಲ್ಲಾ ಬಿಟ್ಟುಬಿಟ್ಟು, ನನ್ನ ಸಕಲವಿಧಿಗಳನ್ನು ಕೈಗೊಂಡು, ನ್ಯಾಯನೀತಿಗಳನ್ನು ನಡೆಸಿದರೆ ಸಾಯನು; ಖಂಡಿತ ಜೀವಿಸುವನು.</verse>
				<verse number="22">ಅವನು ಮಾಡಿದ ಯಾವ ಅಪರಾಧವೂ ಅವನ ಲೆಕ್ಕಕ್ಕೆ ಸೇರದು. ಅವನು ಮಾಡುತ್ತಿರುವ ಸದ್ಧರ್ಮದಿಂದಲೇ ಅವನು ಜೀವಿಸುವನು.</verse>
				<verse number="23">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ದುಷ್ಟನ ಸಾವಿನಲ್ಲಿ ನನಗೆ ಲವಲೇಶವಾದರೂ ಸಂತೋಷವಿಲ್ಲ. ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ.</verse>
				<verse number="24">ಆದರೆ ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು, ಅಧರ್ಮಮಾಡಿ, ದುಷ್ಟನು ನಡೆಸುವ ದುರಾಚಾರಗಳನ್ನೆಲ್ಲಾ ನಡೆಸಿದರೆ, ಅವನು ಜೀವಿಸುವನೇ? ಅವನು ಮಾಡಿದ ಯಾವ ಸುಕೃತ್ಯವೂ ಅವನ ಲೆಕ್ಕಕ್ಕೆ ಸೇರಿಸಲ್ಪಡದು, ಅವನು ಮಾಡುತ್ತಿರುವ ಪಾಪಾಪರಾಧಗಳಿಂದಲೇ ಸಾಯುವನು.</verse>
				<verse number="25">“ಆದರೆ ನೀವು, ‘ಸರ್ವೇಶ್ವರನ ಕ್ರಮ ಸರಿಯಲ್ಲ’ ಎಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನನ್ನ ಕ್ರಮವು ಸರಿಯಲ್ಲವೆ? ನಿಮ್ಮ ಕ್ರಮವೇ ಸರಿಯಲ್ಲವಷ್ಟೆ.</verse>
				<verse number="26">ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮದಿಂದಲೇ ಸಾಯಬೇಕಾಯಿತು.</verse>
				<verse number="27">ದುಷ್ಟನು ತಾನು ಮಾಡುತ್ತಿದ್ದ ದುಷ್ಟತನವನ್ನು ಬಿಟ್ಟು, ನ್ಯಾಯನೀತಿಗಳನ್ನು ನಡೆಸಿದರೆ, ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.</verse>
				<verse number="28">ಅವನು ಯೋಚಿಸಿ, ತಾನು ಮಾಡುತ್ತಿದ್ದ ಅಪರಾಧಗಳನ್ನೆಲ್ಲಾ ಬಿಟ್ಟದ್ದರಿಂದ ಸಾಯನು, ಖಂಡಿತ ಜೀವಿಸುವನು.</verse>
				<verse number="29">ಆದರೆ ಇಸ್ರಯೇಲ್ ವಂಶದವರು ಸರ್ವೇಶ್ವರನ ಕ್ರಮ ಸರಿಯಲ್ಲ ಎಂದು ಹೇಳುತ್ತಿದ್ದಾರೆ; ಇಸ್ರಯೇಲ್ ವಂಶದವರೇ, ನನ್ನ ಕ್ರಮ, ಸರಿಯಿಲ್ಲವೇ? ನಿಮ್ಮ ಕ್ರಮವೇ ಸರಿಯಿಲ್ಲವಷ್ಟೆ.”</verse>
				<verse number="30">ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪು ನೀಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ಪಾಪಕ್ಕೆ ವಿಮುಖರಾಗಿರಿ; ನಿಮ್ಮ ಅಪರಾಧಗಳನ್ನೆಲ್ಲಾ ತೊರೆದುಬಿಡಿ.</verse>
				<verse number="31">ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು, ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನ ಮಾಡಿಕೊಳ್ಳಿ; ಇಸ್ರಯೇಲ್ ವಂಶದವರೇ, ನೀವು ಏಕೆ ಸಾಯಬೇಕು?</verse>
				<verse number="32">ಯಾರ ಸಾವಿನಲ್ಲೂ ನನಗೆ ಸಂತೋಷವಿಲ್ಲ; ಪಾಪಕ್ಕೆ ವಿಮುಖರಾಗಿ ಜೀವಿಸಿರಿ; ಇದು ಸರ್ವೇಶ್ವರನಾದ ದೇವರ ನುಡಿ.”</verse>
			</chapter>
			<chapter number="19">
				<verse number="1">“ಇಸ್ರಯೇಲ್ ಅರಸರನ್ನು ಕುರಿತ ಈ ಶೋಕ ಗೀತೆಯನ್ನು ಹಾಡು:</verse>
				<verse number="2">ಇಗೋ, ನಿನ್ನ ತಾಯಿ, ಸಿಂಹಗಳ ಮಧ್ಯೆ ಸಿಂಹಿಣಿ, ಸಾಕಿದಳು ತನ್ನ ಮರಿಗಳನು, ಯುವ ಸಿಂಹಗಳ ನಡುವೆ ಪವಡಿಸಿ.</verse>
				<verse number="3">ಯುವ ಸಿಂಹವಾಯಿತು ಆಕೆ ಬೆಳೆಸಿದಾ ಮರಿಯೊಂದು, ನರಭಕ್ಷಕ ಆಗಲಾರಂಭಿಸಿತದು ಬೇಟೆಯನು ಕಲಿತು.</verse>
				<verse number="4">ಇದ ಕೇಳಿದ ರಾಷ್ಟ್ರಗಳು ಹಿಡಿದವದನ್ನು ಗುಂಡಿತೋಡಿ, ಈಜಿಪ್ಟ್ ದೇಶಕೊಯ್ದವು ಅದಕ್ಕೆ ಬಿಗಿದು ಸರಪಣಿ.</verse>
				<verse number="5">ತನ್ನ ನಂಬಿಕೆ ನಿರೀಕ್ಷೆ ಹಾಳಾಯಿತೆಂದುಕೊಂಡಾ ಸಿಂಹಿಣಿ, ಪ್ರಾಯಕ್ಕೆ ತಂದಳು ತನ್ನ ಮರಿಗಳಲ್ಲಿ ಇನ್ನೊಂದನ್ನು ಸಾಕಿ.</verse>
				<verse number="6">ಇದು ಕೂಡ ಯುವಸಿಂಹವಾಯಿತು ಇತರ ಸಿಂಹಗಳ ನಡುವೆ ತಿರುಗಾಡಿತು. ಬೇಟೆಯಾಡುವುದನು ಕಲಿತು ತಾನೂ ನರಭಕ್ಷಕನಾಗಲಾರಂಭಿಸಿತು.</verse>
				<verse number="7">ನೆಲಸಮ ಮಾಡಿತು ಪಟ್ಟಣಗಳನೆ ನಾಶಮಾಡಿತು ಕೋಟೆಕೊತ್ತಲುಗಳನೆ ನಾಡಿಗೆ ನಾಡೇ ನಡುಗಿತು ಅದರ ಗರ್ಜನೆಗೆ.</verse>
				<verse number="8">ಆಗ ಬಂದವು ಸುತ್ತಲಿನ ರಾಷ್ಟ್ರಗಳು ಒಟ್ಟುಗೂಡಿ, ಸಿಕ್ಕಿಸಿದವು ಅದನ್ನು ಬಲೆಯೊಡ್ಡಿ, ಗುಂಡಿತೋಡಿ.</verse>
				<verse number="9">ಒಯ್ದವು ಅದನ್ನು ಬಾಬಿಲೋನಿನ ಅರಸನ ಬಳಿಗೆ ಬಿಗಿದು ಸರಪಣಿ, ಹಾಕಿ ಪಂಜರದೊಳಗೆ. ಅದರ ಗರ್ಜನೆ ಇಸ್ರಯೇಲಿನ ಗಿರಿಗಳಿಗೆ ಕೇಳಿಸದಂತೆ, ಸೇರಿಸಿಬಿಟ್ಟವು ಅದನ್ನು ಸುಭದ್ರ ಕೋಟೆಯೊಳಗೆ.</verse>
				<verse number="10">ನಿನ್ನ ಹೆತ್ತ ತಾಯಿ ದ್ರಾಕ್ಷಾಲತೆಯಂತೆ ನೀರಾವರಿಯಲಿ ನಾಟಿದ್ದಾ ಲತೆಯಂತೆ ಬೆಳೆದಿತ್ತದು ಫಲವತ್ತಾಗಿ, ಹುಲುಸಾಗಿ, ಅತಿ ತಂಪಾಗಿಯೆ.</verse>
				<verse number="11">ಅದರಲ್ಲಿದ್ದವು ರಾಜದಂಡ ಯೋಗ್ಯವಾದ ಗಟ್ಟಿ ಕೊಂಬೆಗಳು ಮಿಕ್ಕ ರೆಂಬೆಗಳಿಗಿಂತ ಅಧಿಕವಾಗಿತ್ತವುಗಳ ಎತ್ತರವು ಹಲವಾರು ರೆಂಬೆಗಳ ಮಧ್ಯೆ ಉದ್ದುದ್ದವಾಗಿ ಕಾಣಿಸಿದವು.</verse>
				<verse number="12">ಕಿತ್ತು ಬಿಸಾಡಿದರು ಕ್ರೋಧಿಗಳು ಆ ಲತೆಯನು ಬಾಡಿಸಿತು ಅದರ ಫಲವನು ಮೂಡಣಗಾಳಿಯು ಮುದುರಿ ಒಣಗಿಹೋದುವು ಅದರ ಗಟ್ಟಿಕೊಂಬೆಗಳು.</verse>
				<verse number="13">ದಹಿಸಿಬಿಟ್ಟಿತು ಅವುಗಳನು ಅಗ್ನಿಜ್ವಾಲೆಯು, ಈಗದು ನಾಟಿಕೊಂಡಿದೆ ನೀರಿಲ್ಲದ ಬೆಂಗಾಡಿನೊಳು.</verse>
				<verse number="14">ಅದರ ಕಾಂಡದಿಂದ ಹೊರಟ ಬೆಂಕಿಯು ದಹಿಸಿಬಿಟ್ಟಿದೆ ಅದರ ಫಲಗಳನು ಎಂದೇ ಇನ್ನು ಉಳಿದಿಲ್ಲ ಅದರೊಳು ರಾಜದಂಡಕೆ ಯೋಗ್ಯವಾದ ಗಟ್ಟಿಕೊಂಬೆಯು.” ಇದೊಂದು ಶೋಕ ಗೀತೆ; ರೂಢಿಯಲ್ಲಿ ಇರುವ ಜಾನಪದ ಗೀತೆ.</verse>
			</chapter>
			<chapter number="20">
				<verse number="1">ಏಳನೆಯ ವರ್ಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಯೇಲಿನ ಹಿರಿಯರಲ್ಲಿ ಕೆಲವರು ಸರ್ವೇಶ್ವರನನ್ನು ಪ್ರಶ್ನಿಸುವುದಕ್ಕೆ ಬಂದು ನನ್ನ ಮುಂದೆ ಕುಳಿತುಕೊಂಡರು.</verse>
				<verse number="2">ಆಗ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:</verse>
				<verse number="3">“ನರಪುತ್ರನೇ, ಇಸ್ರಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನನ್ನು ಪ್ರಶ್ನೆಕೇಳುವುದಕ್ಕೆ ಬಂದಿರೋ? ನನ್ನ ಜೀವದಾಣೆ ನಾನು ನಿಮಗೆ ಉತ್ತರ ಕೊಡುವುದೇ ಇಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="4">“ನರಪುತ್ರನೇ, ಇವರಿಗೆ ನ್ಯಾಯತೀರಿಸಲು ನೀನೂ ಮನಸ್ಸು ಮಾಡಿರುವೆಯಾ? ಇವರ ಪಿತೃಗಳ ದುರಾಚಾರಗಳನ್ನು ಇವರಿಗೆ ಹೀಗೆ ತಿಳಿಸು -</verse>
				<verse number="5">ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಾನು ಇಸ್ರಯೇಲರನ್ನು ಆರಿಸಿಕೊಂಡ ದಿನದಂದು ಯಕೋಬ ಸಂತಾನದವರಿಗೆ ಮಾತುಕೊಟ್ಟು, ‘ನಾನೇ ನಿಮ್ಮ ದೇವರಾದ ಸರ್ವೇಶ್ವರ’ ಎಂದು ಈಜಿಪ್ಟ್ ದೇಶದಲ್ಲಿ ಪ್ರಮಾಣಪೂರ್ವಕವಾಗಿ ತಿಳಿಯಪಡಿಸಿದೆ.</verse>
				<verse number="6">ನಾನು ಅವರಿಗೆ ‘ನಾಡುಗಳಲ್ಲೆಲ್ಲ ಶ್ರೀಮಂತವಾದ ನಾಡನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ನಾಡಿಗೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆ;</verse>
				<verse number="7">‘ನೀವೆಲ್ಲರೂ ನಿಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಬಿಸಾಡಿಬಿಡಿ; ಈಜಿಪ್ಟಿನ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿ; ನಾನು ನಿಮ್ಮ ದೇವರಾದ ಸರ್ವೇಶ್ವರ’ ಎಂದು ಅವರನ್ನು ಎಚ್ಚರಿಸಿದೆ.</verse>
				<verse number="8">ಅವರಾದರೋ ನನ್ನ ಮಾತನ್ನು ಲೆಕ್ಕಿಸದೆ ನನ್ನ ವಿರುದ್ಧ ದಂಗೆಯೆದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಡಿಬಿಡಲಿಲ್ಲ. ಈಜಿಪ್ಟಿನ ವಿಗ್ರಹಗಳನ್ನು ತ್ಯಜಿಸಲಿಲ್ಲ. ಆಗ ನಾನು ಈಜಿಪ್ಟ್ ದೇಶದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಎಂದುಕೊಂಡೆ.</verse>
				<verse number="9">ಆದರೂ, ‘ನಿಮ್ಮನ್ನು ಈಜಿಪ್ಟಿನಿಂದ ಪಾರುಮಾಡುವೆನು,’ ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ ಅವರ ಸುತ್ತಮುತ್ತಲಿನ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.</verse>
				<verse number="10">“ಆದರೂ ನಾನು ಅವರನ್ನು ಈಜಿಪ್ಟಿನಿಂದ ಬಿಡಿಸಿ ಮರುಭೂಮಿಗೆ ಕರೆದುತಂದೆ.</verse>
				<verse number="11">ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆ.</verse>
				<verse number="12">ಇದಲ್ಲದೆ, ತಮ್ಮನ್ನು ದೇವಜನರನ್ನಾಗಿ ಮಾಡಿರುವ ಸರ್ವೇಶ್ವರ ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ ಅವರಿಗೂ ಸಂಕೇತವಾದ ಸಬ್ಬತ್ ದಿನಗಳನ್ನು ಅವರಿಗೆ ನೇಮಿಸಿದೆ.</verse>
				<verse number="13">ಆದರೆ ಇಸ್ರಯೇಲ್ ವಂಶದವರು ಮರುಭೂಮಿಯಲ್ಲಿ ನನ್ನ ವಿರುದ್ಧ ದಂಗೆಯೆದ್ದರು. ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ಧಿಕ್ಕರಿಸಿದರು. ಮುಖ್ಯವಾಗಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆಗ ನಾನು ‘ಮರುಭೂಮಿಯಲ್ಲಿರುವ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ ಇವರನ್ನು ಧ್ವಂಸಮಾಡುವೆನು’ ಎಂದುಕೊಂಡೆ.</verse>
				<verse number="14">ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಬರಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.</verse>
				<verse number="15">ಆಮೇಲೆ, ‘ನಾಡುಗಳಲ್ಲೆಲ್ಲಾ ಶ್ರೇಷ್ಠವಾದ ನಾಡಿಗೆ, ಹಾಲೂ ಜೇನೂ ಹರಿಯುವ ಆ ವಾಗ್ದತ್ತನಾಡಿಗೆ ನಿಮ್ಮನ್ನು ಸೇರಿಸೆನು’ ಎಂದು ಮರುಭೂಮಿಯಲ್ಲಿ ಅವರಿಗೆ ಪ್ರಮಾಣಮಾಡಿ ಹೇಳಿದೆ.</verse>
				<verse number="16">ಏಕೆಂದರೆ, ಅವರ ಹೃದಯ ವಿಗ್ರಹಗಳಲ್ಲಿ ಆಸಕ್ತವಾಗಿ, ನನ್ನ ಆಜ್ಞಾವಿಧಿಗಳನ್ನು ಅವರು ಅನುಸರಿಸದೆ ಧಿಕ್ಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿದರು.</verse>
				<verse number="17">“ಆದರೂ ನಾನು ಅವರನ್ನು ನಾಶಮಾಡಲಿಲ್ಲ; ನನ್ನ ಕಟಾಕ್ಷವು ಅವರನ್ನು ಉಳಿಸಿತು; ನಾನು ಅವರನ್ನು ಮರುಭೂಮಿಯಲ್ಲಿ ನಿರ್ಮೂಲಮಾಡಲಿಲ್ಲ.</verse>
				<verse number="18">ಆಮೇಲೆ ನಾನು ಅವರ ಸಂತಾನದವರಿಗೆ - ‘ನೀವು ನಿಮ್ಮ ಪಿತೃಗಳ ಕಟ್ಟಳೆಗಳನ್ನು ಅನುಸರಿಸದೆ ಅವರ ವಿಧಿಗಳನ್ನು ಕೈಗೊಳ್ಳದೆ ಅವರ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರ ಮಾಡಿಕೊಳ್ಳಬೇಡಿ;</verse>
				<verse number="19">ನಾನು ನಿಮ್ಮ ದೇವರಾದ ಸರ್ವೇಶ್ವರ; ನೀವು ನನ್ನ ಆಜ್ಞೆಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಗೊಂಡು ನಡೆಯಿರಿ.</verse>
				<verse number="20">ನಾನು ನೇಮಿಸಿದ ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಸರ್ವೇಶ್ವರ ಎಂದು ನೀವು ತಿಳಿದುಕೊಳ್ಳುವಂತೆ ಅವು ನಿಮಗೂ ನನಗೂ ಗುರುತಾಗಿರುವುವು’ ಎಂದು ಹೇಳಿದೆ.</verse>
				<verse number="21">“ಆದರೆ ಆ ಸಂತಾನದವರು ನನ್ನನ್ನು ಪ್ರತಿಭಟಿಸಿದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಗೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಅನುಸರಿಸಿ ನಡೆಯಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿದರು. ಆದುದರಿಂದ ನಾನು ‘ಮರುಭೂಮಿಯಲ್ಲೇ ಇವರ ಮೇಲೆ ನನ್ನ ರೋಷಾಗ್ನಿಯನ್ನು ಹರಿಸಿ, ನನ್ನ ಕೋಪವನ್ನು ತೀರಿಸಿಕೊಳ್ಳುವೆನು’ ಎಂದುಕೊಂಡೆ.</verse>
				<verse number="22">ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಬಿಡುಗಡೆ ಮಾಡಿದೆನೋ, ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡು, ಕೈಯನ್ನು ಹಿಂದಕ್ಕೆ ತೆಗೆದುಕೊಂಡೆ.</verse>
				<verse number="23">ಆಮೇಲೆ ಅವರು ನನ್ನ ಆಜ್ಞೆಗಳನ್ನು ಕೈಗೊಳ್ಳದೆ, ನನ್ನ ವಿಧಿಗಳನ್ನು ನಿರಾಕರಿಸಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಮಾಡಿ ತಮ್ಮ ಪಿತೃಗಳ ವಿಗ್ರಹಗಳಲ್ಲೇ ಆಸಕ್ತರಾದರು.</verse>
				<verse number="24">ಆದ್ದರಿಂದ ನಾನು ‘ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು’ ಎಂದು ಮರುಭೂಮಿಯಲ್ಲಿ ಪ್ರಮಾಣಮಾಡಿ ಹೇಳಿದೆ.</verse>
				<verse number="25">“ಇದಲ್ಲದೆ, ‘ನಾನೇ ಸರ್ವೇಶ್ವರ’ ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ಆಜ್ಞೆಗಳನ್ನೂ ಜೀವಾಧಾರವಲ್ಲದ ವಿಧಿಗಳನ್ನೂ ನೇಮಿಸಿದೆ.</verse>
				<verse number="26">ಅವರು ತಮ್ಮ ಚೊಚ್ಚಲುಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ, ಕೇವಲ ದುರವಸ್ಥೆಗೆ ತಂದೆನು.</verse>
				<verse number="27">“ಹೀಗಿರಲು, ನರಪುತ್ರನೇ, ಇಸ್ರಯೇಲ್ ವಂಶದವರಿಗೆ ಈ ಮಾತನ್ನು ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಿಮ್ಮ ಪಿತೃಗಳು ಪುನಃ ದ್ರೋಹಮಾಡಿ ನನ್ನನ್ನು ದೂಷಿಸಿದ್ದಾರೆ.</verse>
				<verse number="28">ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ನಾಡಿಗೆ ಅವರನ್ನು ಸೇರಿಸಿದ ಮೇಲೆ, ಅವರು ಎತ್ತರವಾದ ಎಲ್ಲ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲ ಮರಗಳನ್ನೂ ನೋಡಿ, ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಒಪ್ಪಿಸುತ್ತಿದ್ದರು.</verse>
				<verse number="29">ನೀವು ಹೋಗುವ ‘ಬಾ - ಮಾ’ ಎಂಬ ಪೂಜಾಸ್ಥಳ ಎಂಥ ಸ್ಥಳ? (ಇಂದಿನವರೆಗೂ ಇಂಥಾ ಪೂಜಾಸ್ಥಳಗಳಿಗೆ ಬಾಮಾ ಎಂದೇ ಹೆಸರು).</verse>
				<verse number="30">“ಇಸ್ರಯೇಲ್ ವಂಶದವರಿಗೆ ಹೀಗೆ ಹೇಳು: - ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಿಮ್ಮ ಪಿತೃಗಳಂತೆ ನಿಮ್ಮನ್ನು ನೀವೇ ಅಪವಿತ್ರಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯವಸ್ತುಗಳನ್ನು ನೀವೂ ಪೂಜಿಸಿ ದೇವದ್ರೋಹಮಾಡುತ್ತೀರೋ?</verse>
				<verse number="31">ನೀವು ಬಲಿಯರ್ಪಿಸುತ್ತಾ, ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧಮಾಡಿಕೊಂಡಿರಿ. ಹೀಗಿರುವಾಗ ಇಸ್ರಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೇ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸೆನು; ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="32">‘ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರ, ಕಲ್ಲುಗಳ ವಿಗ್ರಹಗಳನ್ನು ಪೂಜಿಸುವೆವು’ ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆ ಎಷ್ಟು ಮಾತ್ರವೂ ನೆರವೇರದು.</verse>
				<verse number="33">“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಸುರಿಸುತ್ತಾ, ನಿಮ್ಮ ಮೇಲೆ ದೊರೆತನಮಾಡುವೆನು;</verse>
				<verse number="34">ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ, ಭುಜಪರಾಕ್ರಮವನ್ನು ತೋರಿಸಿ, ರೋಷಾಗ್ನಿಯನ್ನು ಹರಿಸುತ್ತಾ, ನಿಮ್ಮನ್ನು ಜನಾಂಗಗಳಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ನಿಮ್ಮನ್ನು ಒಂದುಗೂಡಿಸಿ,</verse>
				<verse number="35">ಜನಾಂಗಗಳ ಮಧ್ಯೆ ಮರುಭೂಮಿಗೆ ಕರೆತಂದು ಅಲ್ಲೇ ಮುಖಾಮುಖಿಯಾಗಿ ನಿಮ್ಮೊಂದಿಗೆ ವಾದಿಸುವೆನು.</verse>
				<verse number="36">ನಾನು ಈಜಿಪ್ಟಿನ ಮರುಭೂಮಿಯಲ್ಲಿ ನಿಮ್ಮ ಪಿತೃಗಳ ಸಂಗಡ ವಾದಿಸಿದಂತೆ ನಿಮ್ಮ ಸಂಗಡವೂ ವಾದಿಸುವೆನು; ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="37">“ನಾನು ನಿಮ್ಮನ್ನು ಲೆಕ್ಕಿಸುವಂತೆ, ಕೋಲಿನ ಕೆಳಗೆ ಹೋಗುವಂತೆಮಾಡಿ, ಒಡಂಬಡಿಕೆಯ ಕಟ್ಟಿನಿಂದ ಬಂಧಿಸುವೆನು,</verse>
				<verse number="38">ನನಗೆ ವಿಮುಖರಾದ ದ್ರೋಹಿಗಳನ್ನು ನಿಮ್ಮಿಂದ ದೂರಕ್ಕೆ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಬಿಡುಗಡೆ ಮಾಡಿದರೂ ಅವರು ಇಸ್ರಯೇಲ್ ನಾಡಿಗೆ ಸೇರುವುದೇ ಇಲ್ಲ; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.</verse>
				<verse number="39">“ಇಸ್ರಯೇಲ್ ವಂಶದವರೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹೋಗಿರಿ, ನಿಮ್ಮ ವಿಗ್ರಹಗಳನ್ನು ಪೂಜಿಸಿರಿ; ಮುಂದಕ್ಕಾದರು ನನ್ನ ಮಾತನ್ನು ಕೇಳಿಯೇ ಕೇಳುವಿರಿ; ಇನ್ನು ಮೇಲಾದರು ನನ್ನ ಪರಿಶುದ್ಧನಾಮವನ್ನು ನಿಮ್ಮ ಬಲಿಗಳಿಂದ ಹಾಗೂ ವಿಗ್ರಹಗಳಿಂದ ನೀವು ಅಪಕೀರ್ತಿಗೆ ಒಳಪಡಿಸಲಾರಿರಿ.</verse>
				<verse number="40">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾಡಿನಲ್ಲಿ ಇಸ್ರಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧ ಬೆಟ್ಟದಲ್ಲೇ, ಇಸ್ರಯೇಲಿನ ಪರ್ವತಾಗ್ರದಲ್ಲೇ, ನನ್ನನ್ನು ಪೂಜಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದುದೆಲ್ಲವನ್ನೂ ಅಂಗೀಕರಿಸುವೆನು.</verse>
				<verse number="41">ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡುಗಡೆಮಾಡಿ, ನೀವು ಚದರಿಹೋಗಿರುವ ದೇಶಗಳಿಂದ ತಂದು ಸೇರಿಸುವಾಗ, ನಿಮ್ಮ ಸುಗಂಧಹೋಮವನ್ನು ಆಘ್ರಾಣಿಸಿ, ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ, ನಿಮ್ಮ ರಕ್ಷಣೆಯ ಮೂಲಕ, ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.</verse>
				<verse number="42">ನಾನು ಪ್ರಮಾಣಮಾಡಿ ನಿಮ್ಮ ಪಿತೃಗಳಿಗೆ ಯಾವ ನಾಡನ್ನು ಕೊಟ್ಟೆನೋ ಆ ಇಸ್ರಾಯೇಲ್ ನಾಡಿಗೆ ನಿಮ್ಮನ್ನು ಬರಮಾಡುವಾಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.</verse>
				<verse number="43">ನಿಮ್ಮನ್ನು ಅಪವಿತ್ರಗೊಳಿಸಿರುವ ನಿಮ್ಮ ನಡತೆಯನ್ನೂ ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ನೆನಪಿಗೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ, ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.</verse>
				<verse number="44">ಇಸ್ರಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ, ನಾನೇ ಸರ್ವೇಶ್ವರ ಎಂದು ನಿಮಗೆ ತಿಳಿಯುವುದು; ಇದು ಸರ್ವೇಶ್ವರನಾದ ದೇವರ ನುಡಿ.”</verse>
				<verse number="45">ಆಮೇಲೆ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -</verse>
				<verse number="46">“ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ, ಆ ಕಡೆಗೆ ಮಾತಾಡುತ್ತಾ ದಕ್ಷಿಣ ಸೀಮೆಯ ವನವನ್ನು ಉದ್ದೇಶಿಸಿ ಪ್ರಸ್ತಾಪವನ್ನೆತ್ತಿ,</verse>
				<verse number="47">ಆ ವನಕ್ಕೆ ಹೀಗೆ ಪ್ರವಾದಿಸು: ‘ಸರ್ವೇಶ್ವರನ ಮಾತನ್ನು ಕೇಳು: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು. ಅದು ನಿನ್ನಲ್ಲಿನ ಎಲ್ಲಾ ಹಸಿರುಮರಗಳನ್ನೂ ಒಣಮರಗಳನ್ನೂ ಕಬಳಿಸಿಬಿಡುವುದು; ಧಗಧಗಿಸುವ ಜ್ವಾಲೆ ಆರದೆ, ತೆಂಕಲಿಂದ ಬಡಗಲವರೆಗೆ ಎಲ್ಲರ ಮುಖಗಳನ್ನು ಕುಂದಿಸುವುದು.</verse>
				<verse number="48">ಅದನ್ನು ಹೊತ್ತಿಸಿದವನು ಸರ್ವೇಶ್ವರನಾದ ನಾನೇ ಎಂದು ಸಕಲ ನರಪ್ರಾಣಿಗಳಿಗೆ ಆಗ ಗೋಚರವಾಗುವುದು; ಅದು ಆರಿಹೋಗದು’.</verse>
				<verse number="49">ಆಗ ನಾನು - “ಅಯ್ಯೋ, ಸರ್ವೇಶ್ವರನಾದ ದೇವರೇ, ‘ಅವನು ಒಗಟುಗಾರನಲ್ಲವೆ?’ ಎಂದು ಈ ಜನರು ನನ್ನ ಬಗ್ಗೆ ಆಡಿಕೊಳ್ಳುತ್ತಾರೆ” ಎಂದು ಅರಿಕೆಮಾಡಿದೆನು.</verse>
			</chapter>
			<chapter number="21">
				<verse number="1">ಸರ್ವೇಶ್ವರ ನನಗೆ ಈ ವಾಣಿಯನ್ನು ದಯಪಾಲಿಸಿದರು -</verse>
				<verse number="2">“ನರಪುತ್ರನೇ, ನೀನು ಜೆರುಸಲೇಮಿಗೆ ಅಭಿಮುಖನಾಗಿ, ಅಲ್ಲಿನ ಪವಿತ್ರಸ್ಥಳಗಳ ಕಡೆಗೆ ಮಾತಾಡುತ್ತಾ, ಇಸ್ರಯೇಲ್ ನಾಡಿನ ಪ್ರಸ್ತಾಪವನ್ನೆತ್ತಿ ಆ ನಾಡಿಗೆ ಹೀಗೆ ಪ್ರವಾದಿಸು:</verse>
				<verse number="3">ಸರ್ವೇಶ್ವರ ಇಂತೆನ್ನುತ್ತಾರೆ - ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು ನಿನ್ನಲ್ಲಿನ ಸಜ್ಜನರನ್ನೂ ದುರ್ಜನರನ್ನೂ ಸಂಹರಿಸಿಬಿಡುವೆನು.</verse>
				<verse number="4">ನಾನು ನಿನ್ನಲ್ಲಿನ ಸಜ್ಜನರನ್ನೂ ದುರ್ಜನರನ್ನೂ ಸಂಹರಿಸಬೇಕೆಂದಿರುವುದರಿಂದ ನನ್ನ ಖಡ್ಗ ಒರೆಯಿಂದ ಹೊರಟು ದಕ್ಷಿಣದಿಂದ ಉತ್ತರವರೆಗೆ ಸಕಲ ನರಪ್ರಾಣಿಗಳ ಮೇಲೆ ಬೀಳುವುದು;</verse>
				<verse number="5">ಆಗ ಸರ್ವೇಶ್ವರನಾದ ನಾನೇ ನನ್ನ ಖಡ್ಗವನ್ನು ಒರೆಯಿಂದ ಹಿರಿದಿದ್ದೇನೆ ಎಂಬುದು ಎಲ್ಲ ನರಮಾನವರಿಗೂ ತಿಳಿಯುವುದು; ಅದು ಪುನಃ ಒರೆಗೆ ಸೇರದು.</verse>
				<verse number="6">ನರಪುತ್ರನೇ, ಮೊರೆಯಿಡು; ಸೊಂಟಮುರಿದಷ್ಟು ದುಃಖದಿಂದ ಜನರ ಮುಂದೆ ನರಳಾಡು.</verse>
				<verse number="7">‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳುವರು. ಆಗ ನೀನು ಅವರಿಗೆ - ‘ದುರ್ವಾರ್ತೆಯ ನಿಮಿತ್ತ ನರಳುತ್ತಿದ್ದೇನೆ; ಇಗೋ, ವಿಪತ್ತು ಬಂದಿತು; ಎಲ್ಲರ ಹೃದಯವು ಕರಗಿ ನೀರಾಗುವುದು, ಎಲ್ಲರ ಕೈ ಜೋಲುಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಅದರುವುದು; ಇಗೋ, ಬಂದಿತು, ಬಂದಾಯಿತು! ಇದು ಸರ್ವೇಶ್ವರನಾದ ದೇವರ ನುಡಿ,’ ಎಂದು ಉತ್ತರಕೊಡು.”</verse>
				<verse number="8">ಸರ್ವೇಶ್ವರ ನನಗೆ ಅನುಗ್ರಹಿಸಿದ ವಾಣಿ ಇದು:</verse>
				<verse number="9">“ನರಪುತ್ರನೇ, ಪ್ರವಾದಿಸು ಸರ್ವೇಶ್ವರ ಹೀಗೆನ್ನುತ್ತಾರೆಂದು:</verse>
				<verse number="10">ಆಹಾ ಖಡ್ಗ, ಖಡ್ಗ, ಸಾಣೆ ಹಿಡಿದ ಖಡ್ಗ, ಮಸೆದ ಖಡ್ಗ! ಸಾಣೆ ಹಿಡಿದಿದೆ ಹತಿಸುವಂತೆ, ಮಸೆದಿದೆ ಮಿಂಚುವಂತೆ. ಸಂಭ್ರಮಿಸಲಾದೀತೆ ‘ನಮ್ಮ ಕುಮಾರನ ರಾಜದಂಡ’ ಎಂದು? ಮಿಕ್ಕ ದಂಡಗಳನ್ನೆಲ್ಲ ಧಿಕ್ಕರಿಸುವಂಥ ದಂಡವೆಂದುಕೊಂಡು?</verse>
				<verse number="11">ಬಳಕೆಗೆ ಸಿದ್ಧವಿರಲೆಂದು ಕೊಡಲಾಗಿದೆ ಆ ಖಡ್ಗ ಮಸೆಯಲಿಕ್ಕೆ ಮಸೆದು, ಸಾಣೆ ಹಿಡಿದು, ಸಜ್ಜಾಗಿದೆ ಅದು ಹತ್ಯಗಾರನ ಹಿಡಿತಕ್ಕೆ.</verse>
				<verse number="12">ನರಪುತ್ರನೇ, ಕೂಗು, ಗೋಳಾಡು, ಬಡಿದುಕೋ ಎದೆ! ಎರಗಿದೆ ಆ ಖಡ್ಗ ನನ್ನ ಜನರ ಮೇಲೆ ಇಸ್ರಯೇಲಿನ ಅರಸರೆಲ್ಲರ ಮೇಲೆ ತುತ್ತಾಗುವರು ಅದಕ್ಕೆ ಜನನಾಯಕರು ಜನರೊಂದಿಗೆ.</verse>
				<verse number="13">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಸಂಭವಿಸಿದೆ ಪರಿಶೋಧನೆ ಏನು ಗತಿ, ರಾಜದಂಡವೇ ನಾಶವಾದರೆ!</verse>
				<verse number="14">ನರಪುತ್ರನೇ, ಪ್ರವಾದಿಸು, ಚಪ್ಪಾಳೆ ಬಡಿ, ಹತಿಸುವುದಾ ಖಡ್ಗ ಇಮ್ಮಡಿ ಮುಮ್ಮಡಿ. ಪ್ರಜೆಯನ್ನು ಸಂಹರಿಸುವುದಾ ಖಡ್ಗ ಅಧಿಪತಿಯನ್ನೇ ಸುತ್ತಲು ಬೀಸಿ ಹತಿಸುವುದಾ ಖಡ್ಗ.</verse>
				<verse number="15">ನೀರಾಗುವುದು ಜನರ ಹೃದಯ, ಎಡವಿ ಬೀಳುವರು ಬಹುಜನ. ಪುರದ್ವಾರಗಳಿಗೇ ತಂದಿರುವೆನು ಹತಿಸುವಾ ಖಡ್ಗವ. ಮಿನುಗುತಿಹುದದು ಮಿಂಚಿನಂತೆ ಹರಿತವಿದೆ ವಧೆಗಾಗುವ ಕತ್ತಿಯಂತೆ.</verse>
				<verse number="16">ಖಡ್ಗವೇ, ಏಕಾಗ್ರವಾಗಿ ಹೋಗು ಬಲಕೆ ಸಜ್ಜಾಗಿ ಸಾಗು ಎಡಕೆ ಹೊರಡು ನಿನ್ನ ಮುಖವಿದ್ದ ಕಡೆಗೆ.</verse>
				<verse number="17">ನಾನೂ ರೋಷ ತೀರಿಸಿಕೊಳ್ವೆ ಚಪ್ಪಾಳೆ ತಟ್ಟಿ ಇದು ಸರ್ವೇಶ್ವರನಾದ ನನ್ನ ನುಡಿ.”</verse>
				<verse number="18">ಸರ್ವೇಶ್ವರ ನನಗೆ ಮತ್ತೊಂದು ವಾಣಿಯನ್ನು ದಯಪಾಲಿಸಿದರು - “ನರಪುತ್ರನೇ,</verse>
				<verse number="19">ಬಾಬಿಲೋನಿನ ಅರಸನ ಖಡ್ಗ ಬರುವುದಕ್ಕೆ ಎರಡು ದಾರಿಗಳುಳ್ಳ ನಕ್ಷೆಯನ್ನು ಬರೆ; ಅವೆರಡು ದಾರಿಗಳು ಒಂದೇ ದೇಶದಿಂದ ಹೊರಟಹಾಗಿರಲಿ; ಒಂದೊಂದು ಪಟ್ಟಣಕ್ಕೆ ಹೋಗುವ ದಾರಿಯ ಮೊದಲಲ್ಲಿ ಕೈಮರವನ್ನು ಚಿತ್ರಿಸು.</verse>
				<verse number="20">ಅಮ್ಮೋನ್ಯರ ರಬ್ಬಾ ಪಟ್ಟಣಕ್ಕೂ ಜುದೇಯದಲ್ಲಿ ಕೋಟೆಕೊತ್ತಲಗಳಿಂದ ಕೂಡಿದ ಜೆರುಸಲೇಮಿಗೂ ಆ ಖಡ್ಗ ಬರುವುದಕ್ಕೆ ದಾರಿಗಳನ್ನು ಮಾಡು.</verse>
				<verse number="21">ಮಾರ್ಗ ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಪ್ರಾರಂಭದಲ್ಲಿ ಬಾಬಿಲೋನಿನ ಅರಸ ಶಕುನ ನೋಡಲು ನಿಂತಿರುವನು. ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆ ಕೇಳಿ, ಹಸ್ತರೇಖೆಯನ್ನು ಪರೀಕ್ಷಿಸಿದ್ದಾನೆ.</verse>
				<verse number="22">ಜೆರುಸಲೇಮ್ ಗುರುತಿನ ಬಾಣ ಅವನ ಬಲಗೈಗೆ ಸಿಕ್ಕಿದೆ; ಭಿತ್ತಿಭೇದಕ ಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ, ಬಾಯಿತೆರೆದು ಸಂಹಾರ ಧ್ವನಿಮಾಡಿ, ಹೌದು ಭಿತ್ತಿಭೇದಕಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ, ದಿಬ್ಬಹಾಕಿ, ಒಡ್ಡು ಕಟ್ಟಬೇಕೆಂಬ ಸೂಚನೆ ಅದರಿಂದ ಬಂದಿತು.</verse>
				<verse number="23">ಆದರೆ ಪುರನಿವಾಸಿಗಳು ತಾವು ಆ ಅರಸನಿಂದ ಮಾಡಿಸಿಕೊಂಡ ಪ್ರಮಾಣಗಳಲ್ಲಿ ಭರವಸೆಯಿಟ್ಟು, ಈ ಶಕುನವು ಸುಳ್ಳೆಂದು ಭಾವಿಸುವರು; ಆದರೆ ಅವರು ತನ್ನ ಕೈಗೆ ಸಿಕ್ಕಿಬೀಳಲೆಂದು ಅವರ ಅಧರ್ಮವನ್ನು ಅವನು ಬೆಳಕಿಗೆ ತರುವನು.</verse>
				<verse number="24">ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಿಮ್ಮ ಅಪರಾಧಗಳು ಬೆಳಕಿಗೆ ಬಂದು, ನಿಮ್ಮ ಪಾಪಗಳು ನಿಮ್ಮ ಕಾರ್ಯಗಳಲ್ಲೆಲ್ಲಾ ಪ್ರತ್ಯಕ್ಷವಾಗಿ, ನೀವು ನಿಮ್ಮ ಅಧರ್ಮವನ್ನು ನನ್ನ ನೆನಪಿಗೆ ತಂದಿರುವಿರಿ; ಆದಕಾರಣ ಶತ್ರುವಿನ ಕೈಗೆ ಸಿಕ್ಕಿಬೀಳುವಿರಿ.</verse>
				<verse number="25">ಇಸ್ರಯೇಲಿನ ದೊರೆಯೇ, ದುಷ್ಟನೇ, ಭ್ರಷ್ಟನೇ, ನಿನಗೆ ಸಮಯವು ಸಮೀಪಿಸಿದೆ; ಇದೇ ನಿನ್ನ ಅಪರಾಧದ ಕಡೆಗಾಲ.</verse>
				<verse number="26">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಿನ್ನ ರುಮಾಲನ್ನು ಕಿತ್ತುಬಿಡು, ಕಿರೀಟವನ್ನು ತೆಗೆದುಹಾಕು. ಎಲ್ಲವೂ ಮೊದಲಿದ್ದ ಹಾಗೆ ಇರುವುದಿಲ್ಲ; ಕೆಳಗಿರುವುದನ್ನು ಮೇಲೆ ಸೇರಿಸಲಾಗುವುದು, ಮೇಲಿರುವುದನ್ನು ಕೆಳಕ್ಕಿಳಿಸಲಾಗುವುದು.</verse>
				<verse number="27">ಧ್ವಂಸ, ಧ್ವಂಸ, ನಾನು ಧ್ವಂಸ ಮಾಡುವೆನು; ರಾಜ್ಯಕ್ಕೆ ಬಾಧ್ಯನು ಬರುವುದರೊಳಗೆ ಒಂದೂ ಇದ್ದಂತಿರದು; ಅವನಿಗೇ ರಾಜ್ಯವನ್ನು ವಹಿಸುವೆನು.</verse>
				<verse number="28">“ನರಪುತ್ರನೇ, ನೀನು ದೈವಸಂಕಲ್ಪವನ್ನು ಪ್ರಕಟಿಸುತ್ತಾ ಹೀಗೆ ನುಡಿ - ಅಮ್ಮೋನ್ಯರ ವಿಷಯದಲ್ಲೂ ಅವರು ಮಾಡುವ ದೂಷಣೆಯ ವಿಷಯದಲ್ಲೂ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ಖಡ್ಗ, ಖಡ್ಗ, ಸಂಹರಿಸುವುದಕ್ಕೆ ಹಿರಿದಿದೆ; ಮಿಂಚುವಂತೆ ಪೂರ್ಣ ಮಸೆಯಲಾಗಿದೆ.</verse>
				<verse number="29">ಅಮ್ಮೋನೇ, ನಿನ್ನ ಜೋಯಿಸರು ಮಿಥ್ಯೆಯನ್ನು ಕಲ್ಪಿಸಿಕೊಂಡು ಸುಳ್ಳುಸುಳ್ಳಾಗಿ ಕಣಿ ಹೇಳುತ್ತಿದ್ದಾರೆ. ಸಮಯವು ಸಮೀಪಿಸಿ ಅಪರಾಧದ ಕಡೆಗಾಲವು ಸಂಭವಿಸಿ ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು; ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಬೀಳುವೆ.</verse>
				<verse number="30">ಕತ್ತಿಯನ್ನು ಒರೆಗೆ ಸೇರಿಸು. ನೀನು ಹುಟ್ಟಿದ ಸ್ಥಳದಲ್ಲಿ, ನಿನ್ನ ಜನ್ಮಭೂಮಿಯಲ್ಲಿ, ನಿನಗೆ ನ್ಯಾಯತೀರಿಸುವೆನು.</verse>
				<verse number="31">ನಿನ್ನ ಮೇಲೆ ನನ್ನ ಕೋಪವನ್ನು ಸುರಿಸಿ, ರೋಷಾಗ್ನಿಯನ್ನು ಕಾರಿ, ಕ್ರೂರಿಗಳನ್ನು ಹಾಳುಮಾಡುವುದರಲ್ಲಿ ಗಟ್ಟಿಗರಾದವರ ಕೈಗೆ ಸಿಕ್ಕಿಸುವೆನು.</verse>
				<verse number="32">ನೀನು ಅಗ್ನಿಗೆ ಆಹುತಿಯಾಗುವೆ; ನೀನು ರಕ್ತ ನಾಡಿನಲ್ಲೆಲ್ಲಾ ಇಂಗಿರುವುದು; ನೀನು ಇನ್ನು ನೆನಪಿಗೆ ಬರುವುದಿಲ್ಲ; ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.”</verse>
			</chapter>
			<chapter number="22">
				<verse number="1">ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸಿದರು -</verse>
				<verse number="2">“ನರಪುತ್ರನೇ, ರಕ್ತಸಿಕ್ತವಾದ ಆ ಪಟ್ಟಣಕ್ಕೆ ನ್ಯಾಯತೀರಿಸಲು ಸ್ಥಿರಮನಸ್ಸು ಮಾಡಿರುವೆಯಾ? ಅದರ ದುರಾಚಾರಗಳನ್ನೆಲ್ಲಾ ಅದಕ್ಕೆ ಹೀಗೆ ತಿಳಿಸು -</verse>
				<verse number="3">ಸರ್ವೇಶ್ವರ ದೇವರು ಇಂತೆನ್ನುತ್ತಾರೆ - ನಿನ್ನ ಮಧ್ಯೆ ರಕ್ತ ಸುರಿಸಿ, ದಂಡನೆಯ ಕಾಲವನ್ನು ಹತ್ತಿರಕ್ಕೆ ತಂದುಕೊಂಡ ನಗರಿಯೇ, ನಿನ್ನ ಕೇಡಿಗಾಗಿಯೇ ವಿಗ್ರಹಗಳನ್ನು ಮಾಡಿಕೊಂಡು ನಿನ್ನನ್ನೆ ಹೊಲೆಗೆಡಿಸಿಕೊಂಡ ನಗರಿಯೇ,</verse>
				<verse number="4">ನೀನು ಸುರಿಸಿದ ರಕ್ತದಿಂದ ಅಪರಾಧಿಯಾಗಿರುವೆ; ಮಾಡಿಕೊಂಡ ವಿಗ್ರಹಗಳಿಂದ ಅಶುದ್ಧವಾಗಿರುವೆ. ಹೀಗೆ ನಿನ್ನ ಸಮಯವನ್ನು ಹತ್ತಿರಕ್ಕೆ ತಂದುಕೊಂಡು ದಂಡನೆಯ ಕಾಲಕ್ಕೆ ಬಂದಿರುವೆ. ಆದಕಾರಣ ನಿನ್ನನ್ನು ಜನಾಂಗಗಳ ದೂಷಣೆಗೂ ಸಕಲ ದೇಶಗಳ ಹಾಸ್ಯಕ್ಕೂ ಗುರಿಮಾಡಿದ್ದೇನೆ.</verse>
				<verse number="5">ಕುಖ್ಯಾತನಗರವೇ, ಗದ್ದಲಕ್ಕೆ ಪ್ರಸಿದ್ಧವಾದ ಪಟ್ಟಣವೇ, ಹತ್ತಿರದವರೂ ದೂರದವರೂ ನಿನ್ನನ್ನು ಹಾಸ್ಯಮಾಡುವರು.</verse>
				<verse number="6">ಇಗೋ, ಇಸ್ರಯೇಲಿನ ಅರಸರು ತಮ್ಮ ತಮ್ಮ ಶಕ್ತ್ಯಾನುಸಾರ ನಿನ್ನಲ್ಲಿ ರಕ್ತ ಸುರಿಸುತ್ತಲೇ ಇದ್ದಾರೆ.</verse>
				<verse number="7">ನಿನ್ನವರು ತಾಯಿತಂದೆಗಳನ್ನು ತುಚ್ಛೀಕರಿಸಿದ್ದಾರೆ, ನಿನ್ನವರು ವಿದೇಶಿಯರನ್ನು ಬಾದಿಸಿದ್ದಾರೆ, ನಿನ್ನವರು ಅನಾಥರನ್ನೂ ವಿಧವೆಯರನ್ನೂ ಹಿಂಸಿಸಿದ್ದಾರೆ.</verse>
				<verse number="8">ನೀನು ನನ್ನ ಪವಿತ್ರವಸ್ತುಗಳನ್ನು ಅಲಕ್ಷ್ಯಮಾಡಿ, ನಾನು ನೇಮಿಸಿದ ಸಬ್ಬತ್ ದಿನಗಳನ್ನು ಅಪವಿತ್ರಗೊಳಿಸಿರುವೆ. ಚಾಡಿಕೋರರು ನಿನ್ನಲ್ಲಿ ರಕ್ತ ಹರಿಸಿದ್ದಾರೆ;</verse>
				<verse number="9">ನಿನ್ನವರು ಗುಡ್ಡಗಳ ಮೇಲೆ ಯಜ್ಞಶೇಷವನ್ನು ತಿಂದಿದ್ದಾರೆ; ನಿನ್ನ ಮಧ್ಯೆ ದುರಾಚಾರಗಳನ್ನು ನಡೆಸಿದ್ದಾರೆ.</verse>
				<verse number="10">ನಿನ್ನವರು ತಮ್ಮ ತಂದೆಯವರಿಗೆ ಮಾನಭಂಗಮಾಡಿದ್ದಾರೆ; ನಿನ್ನಲ್ಲಿ ಮುಟ್ಟಿನಿಂದ ಅಶುದ್ಧಳಾದವಳನ್ನು ಕೂಡಿದ್ದಾರೆ.</verse>
				<verse number="11">ನಿನ್ನಲ್ಲಿ ಒಬ್ಬನು ನೆರೆಯವನ ಹೆಂಡತಿಯೊಡನೆ ದುರಾಚಾರ ನಡೆಸಿದ್ದಾನೆ; ಇನ್ನೊಬ್ಬನು ಅತ್ಯಾಚಾರಮಾಡಿ ಸೊಸೆಯನ್ನು ಕೆಡಿಸಿದ್ದಾನೆ; ಮತ್ತೊಬ್ಬನು ತನ್ನ ತಂದೆಯ ಮಗಳೇ ಆದ ತಂಗಿಯ ಮಾನಭಂಗ ಮಾಡಿದ್ದಾನೆ.</verse>
				<verse number="12">“ನಿನ್ನವರು ರಕ್ತ ಸುರಿಸುವುದಕ್ಕೆ ಲಂಚಪಡೆದಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ಸುಲಿಗೆಮಾಡಿ, ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="13">“ಇಗೋ, ನೀನು ದೋಚಿಕೊಂಡ ಲಾಭವನ್ನೂ ನೀನು ಸುರಿದ ರಕ್ತವನ್ನೂ ನೋಡಿ ಕೈ ಎತ್ತಿದ್ದೇನೆ.</verse>
				<verse number="14">ನಾನು ನಿನ್ನನ್ನು ದಂಡಿಸುವ ಕಾಲದಲ್ಲಿ ಮನಸ್ಸನ್ನು ಗಟ್ಟಿಮಾಡಿಕೊಂಡಿರುವೆಯಾ? ಕೈಗಳನ್ನು ಬಲಪಡಿಸಿಕೊಂಡಿರುವೆಯಾ? ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ. ಅಂತೆಯೇ ನಡೆಸುತ್ತೇನೆ.</verse>
				<verse number="15">ನಾನು ನಿನ್ನನ್ನು ಜನಾಂಗಗಳಲ್ಲಿ ಚದರಿಸಿ, ದೇಶವಿದೇಶಗಳಿಗೆ ತೂರಿಬಿಟ್ಟು, ನಿನ್ನ ಹೊಲಸನ್ನು ನಿನ್ನೊಳಗಿಂದ ತೆಗೆದುಹಾಕುವೆನು.</verse>
				<verse number="16">ಜನಾಂಗಗಳ ದೃಷ್ಟಿಯಲ್ಲಿ ನಿನ್ನಷ್ಟಕ್ಕೆ ನೀನೇ ಅಪಕೀರ್ತಿಗೆ ಗುರಿಯಾಗುವೆ; ನಾನೇ ಸರ್ವೇಶ್ವರ ಎಂದು ಆಗ ನಿನಗೆ ಗೊತ್ತಾಗುವುದು.”</verse>
				<verse number="17">ಆಮೇಲೆ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -</verse>
				<verse number="18">“ನರಪುತ್ರನೇ, ಇಸ್ರಯೇಲ್ ವಂಶವೆಂಬ ಲೋಹವು ನನ್ನ ದೃಷ್ಟಿಯಲ್ಲಿ ಕಲ್ಮಷವಾಗಿದೆ; ಅದೆಲ್ಲಾ ಕುಲುಮೆಯಲ್ಲಿನ ತಾಮ್ರ, ತವರ, ಕಬ್ಬಿಣ, ಸೀಸ; ಅದು ಕಂದುಲೋಹ.</verse>
				<verse number="19">ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀವೆಲ್ಲರು ಕಲ್ಮಷವಾಗಿರುವುದರಿಂದ ಇಗೋ, ನಿಮ್ಮನ್ನು ಜೆರುಸಲೇಮಿನ ಒಳಕ್ಕೆ ಸೇರಿಸುವೆನು.</verse>
				<verse number="20">ಬೆಳ್ಳಿ, ತಾಮ್ರ, ಕಬ್ಬಿಣ, ಸೀಸ, ತವರ ಇವುಗಳನ್ನು ಕುಲುಮೆಯೊಳಗೆ ಹಾಕಿ ಊದಿ, ಉರಿಹತ್ತಿಸಿ, ಕರಗಿಸುವಂತೆ ನಾನು ನಿಮ್ಮನ್ನು ನನ್ನ ಉಗ್ರಕೋಪಾಗ್ನಿಯಲ್ಲಿ ಇಟ್ಟು ಕರಗಿಸುವೆನು.</verse>
				<verse number="21">ಹೌದು, ನಾನು ನಿಮ್ಮನ್ನು ನನ್ನ ರೋಷಾಗ್ನಿಯಲ್ಲಿ ಹಾಕಿ ಊದಲು ನೀವು ಅದರೊಳಗೆ ಕರಗಿಹೋಗುವಿರಿ.</verse>
				<verse number="22">ಬೆಳ್ಳಿ ಕುಲುಮೆಯೊಳಗೆ ಕರಗುವಂತೆ ನೀವು ನನ್ನ ರೋಷಾಗ್ನಿಯಲ್ಲಿ ಕರಗಿಬಿಡುವಿರಿ; ನಿಮ್ಮ ಮೇಲೆ ರೋಷಾಗ್ನಿಯನ್ನು ಸುರಿಸಿದ ನಾನು ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.”</verse>
				<verse number="23">ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು - “ನರಪುತ್ರನೇ,</verse>
				<verse number="24">ಆ ನಾಡಿಗೆ ಹೀಗೆ ಹೇಳು - ದೇವರ ಕೋಪದ ಈ ದಿನದಲ್ಲಿ ನೀನು ಶುದ್ಧಿಯಾಗದ ದೇಶ, ಮಳೆಯಿಲ್ಲದ ದೇಶ.</verse>
				<verse number="25">ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ. ನರಪ್ರಾಣಿಗಳನ್ನು ನುಂಗಿದ್ದಾರೆ, ಆಸ್ತಿಯನ್ನೂ ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹುಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.</verse>
				<verse number="26">ಅಲ್ಲಿನ ಯಾಜಕರು ನನ್ನ ವಿಧಿಗಳನ್ನು ಉಲ್ಲಂಘಿಸಿದ್ದಾರೆ, ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಗೊಳಿಸಿದ್ದಾರೆ; ಮೀಸಲಾದುದಕ್ಕೂ ಮೀಸಲಲ್ಲದ್ದಕ್ಕೂ ಭೇದವೆಣಿಸಲಿಲ್ಲ. ಶುದ್ಧಾ ಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ; ನಾನು ನೇಮಿಸಿದ ಸಬ್ಬತ್ ದಿನಗಳನ್ನು ಕಡೆಗಣಿಸಿದ್ದಾರೆ. ಇದರಿಂದ ನಾನು ಅವರ ಮಧ್ಯೆ ಅಪಕೀರ್ತಿಗೆ ಗುರಿಯಾಗಿದ್ದೇನೆ.</verse>
				<verse number="27">ಅಲ್ಲಿನ ಪ್ರಮುಖರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ಕಬಳಿಸುವ, ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.</verse>
				<verse number="28">ಅಲ್ಲಿನ ಪ್ರವಾದಿಗಳು ಇವರಿಗಾಗಿ ಮಿಥ್ಯ ದರ್ಶನವನ್ನು ಕಂಡು, ಸುಳ್ಳು ಕಣಿಯನ್ನು ಹೇಳಿ, ಸರ್ವೇಶ್ವರ ಮಾತಾಡದಿದ್ದರೂ ‘ಸರ್ವೇಶ್ವರ ದೇವರು ಇಂತೆನ್ನುತ್ತಾರೆ’ ಎಂದು ನುಡಿಯುತ್ತಾ ಮೇಲೆ ಮೇಲೆ ಸುಣ್ಣ ಬಳಿದಿದ್ದಾರೆ.</verse>
				<verse number="29">ಜನಸಾಮಾನ್ಯರೂ ಹಿಂಸಿಸಿ ಸೂರೆಮಾಡಿದ್ದಾರೆ, ದೀನದರಿದ್ರರನ್ನು ಬಾಧಿಸಿದ್ದಾರೆ, ವಿದೇಶಿಗಳನ್ನು ಅನ್ಯಾಯವಾಗಿ ನಸುಕಿಬಿಟ್ಟಿದ್ದಾರೆ.</verse>
				<verse number="30">ನಾನು ದೇಶವನ್ನು ಹಾಳುಮಾಡದಂತೆ ನನ್ನೆದುರಿಗೆ ದೇಶ ರಕ್ಷಣೆಗಾಗಿ, ಪೌಳಿಯ ಒಡಕಿನಲ್ಲಿ ನಿಲ್ಲುವುದಕ್ಕೂ ಗೋಡೆಯನ್ನು ಗಟ್ಟಿಮಾಡುವುದಕ್ಕೂ ತಕ್ಕವನನ್ನು ನಾನು ಹುಡುಕಿದರೂ ಯಾರೂ ಸಿಕ್ಕಲಿಲ್ಲ.</verse>
				<verse number="31">ಆದಕಾರಣ, ನಾನು ನನ್ನ ಕೋಪವನ್ನು ಅವರ ಮೇಲೆ ಸುರಿಸಿ, ನನ್ನ ರೋಷಾಗ್ನಿಯಿಂದ ಅವರನ್ನು ಧ್ವಂಸಮಾಡಿ, ಅವರ ದುರ್ನಡತೆಯ ಹೊಣೆಯನ್ನು ಅವರ ಮೇಲೆ ಹೊರಿಸಿದ್ದೇನೆ. ಇದು ಸರ್ವೇಶ್ವರನಾದ ದೇವರ ನುಡಿ.”</verse>
			</chapter>
			<chapter number="23">
				<verse number="1">ಸರ್ವೇಶ್ವರ ಮತ್ತೊಂದು ವಾಣಿಯನ್ನು ನನಗೆ ದಯಪಾಲಿಸಿದರು:</verse>
				<verse number="2">“ನರಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು.</verse>
				<verse number="3">ಅವರು ಈಜಿಪ್ಟಿನಲ್ಲಿ ಸೂಳೆತನ ಮಾಡುತ್ತಿದ್ದರು. ಬಾಲ್ಯದಲ್ಲಿ ವೇಶ್ಯೆಯರಾಗಿ ನಡೆಯುತ್ತಿದ್ದರು. ಅಲ್ಲಿನ ಪುರುಷರು ಅವರ ಸ್ತನಗಳನ್ನು ಹಿಸುಕಿದರು, ಎಳೆಯ ತೊಟ್ಟುಗಳನ್ನು ಸವರಿಸಿದರು.</verse>
				<verse number="4">ಹಿರಿಯಳ ಹೆಸರು ಒಹೊಲ, ಕಿರಿಯವಳ ಹೆಸರು ಒಹೊಲೀಬ. ಅವರು ನನ್ನವರಾಗಿ ಗಂಡು ಹೆಣ್ಣು ಮಕ್ಕಳನ್ನು ಹೆತ್ತರು. ಒಹೊಲ ಸಮಾರಿಯವನ್ನೂ, ಒಹೊಲೀಬ ಜೆರುಸಲೇಮನ್ನೂ ಸೂಚಿಸುವ ಹೆಸರುಗಳು.</verse>
				<verse number="5">ಒಹೊಲಳು ನನ್ನವಳಾಗಿದ್ದರೂ ಹಾದರ ನಡೆಸಿ</verse>
				<verse number="6">ತನ್ನ ಮಿಂಡರನ್ನು ಅಂದರೆ, ಯೋಧರು, ನೀಲಾಂಬರರು, ಅಶ್ವಾರೂಢರು, ನಾಯಕ-ಉಪನಾಯಕರು ಎಲ್ಲ ಮನೋಹರ ಯುವಕರೂ ಆದ ಅಸ್ಸೀರಿಯರನ್ನು ಮೋಹಿಸಿ ಅವರಿಗೆ</verse>
				<verse number="7">ತನ್ನನ್ನು ಸೂಳೆಯಾಗಿ ಒಪ್ಪಿಸಿಕೊಂಡಳು; ಇವರೆಲ್ಲರು ಅಸ್ಸೀರಿಯದಲ್ಲಿನ ಗಣ್ಯವ್ಯಕ್ತಿಗಳು; ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನೇ ಹೊಲಸುಮಾಡಿಕೊಂಡಳು.</verse>
				<verse number="8">ಅವಳು ಈಜಿಪ್ಟಿನಲ್ಲಿ ಇದ್ದಂದಿನಿಂದಲೂ ತನ್ನ ಸೂಳೆತನವನ್ನು ಬಿಡಲಿಲ್ಲ; ಬಾಲ್ಯದಲ್ಲಿಯೇ ಅಲ್ಲಿಯವರು ಅವಳೊಂದಿಗೆ ಮಲಗಿ, ಅವಳ ಎಳೆಯ ತೊಟ್ಟುಗಳನ್ನು ನಸುಕಿ, ಅವಳ ಸಂಗಡ ಸೂಳೆಗಾರಿಕೆಯನ್ನು ಹೆಚ್ಚೆಚ್ಚಾಗಿ ಮಾಡಿದರು.</verse>
				<verse number="9">ಆದಕಾರಣ ನಾನು ಅವಳನ್ನು ಅವಳ ಮಿಂಡರ ಕೈಗೆ ಅಂದರೆ, ಅವಳು ಮೋಹಿಸಿದ ಅಸ್ಸೀರಿಯರ ಕೈಗೆ ಒಪ್ಪಿಸಿದೆ.</verse>
				<verse number="10">ಇವರು ಅವಳನ್ನು ಅವಮಾನಪಡಿಸಿ, ಅವಳ ಗಂಡು ಹೆಣ್ಣು ಮಕ್ಕಳನ್ನು ಎತ್ತಿಕೊಂಡು ಹೋಗಿ, ಅವಳನ್ನು ಖಡ್ಗದಿಂದ ಸಂಹರಿಸಿದರು. ನ್ಯಾಯನಿರ್ಣಯವಾಗುವಾಗ ಹೆಂಗಸರಲ್ಲಿ ಅವಳಿಗೆ ಕೆಟ್ಟ ಹೆಸರು ಬಂದಿತು.</verse>
				<verse number="11">“ಅವಳ ತಂಗಿಯಾದ ಒಹೊಲೀಬಳು ಇದನ್ನು ನೋಡಿಯೂ ಅವಳಿಗಿಂತ ಅಧಿಕವಾಗಿ ಮೋಹಗೊಂಡು, ಅಕ್ಕನ ಹಾದರಕ್ಕಿಂತ ಹೆಚ್ಚಾಗಿ ಹಾದರವನ್ನು ನಡೆಸಿ ಅವಳನ್ನು ಮೀರುವಷ್ಟು ಕೆಟ್ಟವಳಾದಳು.</verse>
				<verse number="12">ಇವಳು ನಾಯಕ-ಉಪನಾಯಕರೂ ಯೋಧರೂ ವಿಚಿತ್ರ ವಸ್ತ್ರಧಾರಿಗಳೂ ಅಶ್ವಾರೂಢರೂ ಎಲ್ಲ ಮನೋಹರ ಯುವಕರೂ ಆದ ಅಸ್ಸೀರಿಯರನ್ನು ಮೋಹಿಸಿದಳು.</verse>
				<verse number="13">ಇವಳೂ ಅಪವಿತ್ರಳಾದುದ್ದನ್ನು ಕಂಡೆನು. ಇಬ್ಬರೂ ಒಂದೇ ಮಾರ್ಗವನ್ನು ಹಿಡಿದಿದ್ದರು.</verse>
				<verse number="14">“ಇವಳು ತನ್ನ ಸೂಳೆತನವನ್ನು ಇನ್ನೂ ಹೆಚ್ಚಿಸಿದಳು; ಬಾಬಿಲೋನಿಯರ ಚಿತ್ರಗಳನ್ನು ಅಂದರೆ, ಸೊಂಟಕ್ಕೆ ನಡುಕಟ್ಟನ್ನು ಕಟ್ಟಿ, ತಲೆಗೆ ಚುಂಗಿನ ರುಮಾಲನ್ನು ಧರಿಸಿ, ನೋಟಕ್ಕೆ ಸರದಾರರಂತಿದ್ದ ಆ ಬಾಬಿಲೋನಿನ ಕಸ್ದೀಯರ ಆಕಾರಗಳನ್ನು ಗೋಡೆಯಲ್ಲಿ ಕಿರಮಂಜಿಯಿಂದ ಚಿತ್ರಿಸಿರುವುದನ್ನು ನೋಡಿದ ಕೂಡಲೆ ಇವಳು ಮೋಹಗೊಳ್ಳುತ್ತಿದ್ದಳು.</verse>
				<verse number="15"></verse>
				<verse number="16">ಬಾಬಿಲೋನಿಯಾದ ಆ ವ್ಯಕ್ತಿಗಳ ಬಳಿಗೆ ದೂತರನ್ನು ಕಳುಹಿಸುತ್ತಿದ್ದಳು.</verse>
				<verse number="17">ಆ ಬಾಬಿಲೋನಿನವರು ಇವಳ ರತಿಮಂಚವನ್ನೇರಿ ತಮ್ಮ ಕಾಮತೃಷೆಯಿಂದ ಇವಳನ್ನು ಕೆಡಿಸಿದರು; ಇವಳು ಅವರಿಂದ ಎಷ್ಟು ಅಶುದ್ಧಳಾದಳೆಂದರೆ ಇವಳಿಗೇ ಅವರ ಬಗ್ಗೆ ಜಿಗುಪ್ಸೆ ಹುಟ್ಟಿತು.</verse>
				<verse number="18">ಇವಳು ಮುಚ್ಚುಮರೆಯಿಲ್ಲದೆ ಹಾದರಮಾಡಿ ತನ್ನ ಮಾನವನ್ನೇ ಕೆಡಿಸಿಕೊಂಡಾಗ ನನ್ನ ಅನುರಾಗ, ಮೊದಲು ಇವಳ ಅಕ್ಕನಿಂದ ದೂರವಾದ ಹಾಗೆ, ಇವಳಿಂದಲೂ ದೂರವಾಯಿತು.</verse>
				<verse number="19">ಆದರೂ ಇವಳು ತಾನು ಈಜಿಪ್ಟ್ ದೇಶದಲ್ಲಿ ಸೂಳೆಯಾಗಿದ್ದ ತನ್ನ ತಾರುಣ್ಯವನ್ನು ನೆನಪುಮಾಡಿಕೊಂಡು ತನ್ನ ಸೂಳೆತನವನ್ನು ಇನ್ನೂ ಹೆಚ್ಚಿಸಿದಳು.</verse>
				<verse number="20">ಕತ್ತೆಗಳಂತೆ ಬೆದೆಯುಳ್ಳವರು, ಕುದುರೆಗಳಂತೆ ದಾಟುವವರು ಆದ ಕಸ್ದೀಯ ಮಿಂಡರನ್ನು ಮೋಹಿಸಿದಳು.</verse>
				<verse number="21">ಒಹೊಲೀಬಳೇ, ನಿನ್ನ ಪುಟ್ಟ ಮೊಲೆಗಳಿಗೆ ಆಸೆಬಿದ್ದ ಈಜಿಪ್ಟ್‌ರಿಂದ ತೊಟ್ಟುಗಳನ್ನು ಚಿವುಟಿಸಿಕೊಂಡ ನಿನ್ನ ತಾರುಣ್ಯದ ಕಾಮವನ್ನು ನೀನು ನೆನಪಿಗೆ ತಂದುಕೊಂಡು ಆ ಮಿಂಡರನ್ನು ಮೋಹಿಸಿದೆಯಲ್ಲವೆ?”</verse>
				<verse number="22">ಹೀಗಿರಲು, ಒಹೊಲೀಬಳೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಗೋ, ಯಾವ ಮಿಂಡರಿಂದ ನಿನ್ನ ಆಸೆ ತೊಲಗಿತೋ ಆ ಮಿಂಡರನ್ನು ಅಂದರೆ, ಮನೋಹರ ಯುವಕರು, ಎಲ್ಲ ನಾಯಕ ಉಪನಾಯಕರು, ಪ್ರಭುಪ್ರಧಾನರು, ಅಶ್ವಾರೂಢರು ಆದ ಬಾಬಿಲೋನಿನವರು,</verse>
				<verse number="23">ಸಮಸ್ತ ಕಸ್ದೀಯರು, ಪಕೋದಿನವರು, ಷೋಯದವರು, ಕೋಯದವರು, ಇವರನ್ನೂ ಇವರೊಂದಿಗೆ ಅಸ್ಸೀರಿಯರೆಲ್ಲರನ್ನೂ ನಾನು ನಿನಗೆ ವಿರುದ್ಧ ಎಬ್ಬಿಸಿ, ಎಲ್ಲ ಕಡೆಯಿಂದಲೂ ನಿನ್ನ ಮೇಲೆ ಬೀಳುವಂತೆ ಮಾಡುವೆನು.</verse>
				<verse number="24">ಅವರು ಆಯುಧ, ರಥ, ಸರಕುಗಾಡಿ, ಜನಾಂಗಗಳ ಸಮೂಹ, ಇವುಗಳೊಂದಿಗೆ ನಿನ್ನ ಮೇಲೆ ಬೀಳುವರು; ಗುರಾಣಿ, ಖೇಡ್ಯ, ಶಿರಸ್ತ್ರಾಣ, ಇವುಗಳನ್ನು ಧರಿಸಿ, ನಿನಗೆ ವಿರುದ್ಧ ಸುತ್ತುಮುತ್ತಲು ವ್ಯೂಹ ಕಟ್ಟುವರು. ನ್ಯಾಯತೀರಿಸುವ ಅಧಿಕಾರವನ್ನು ನಾನು ಅವರಿಗೆ ಕೊಡುವೆನು; ಅವರು ತಮ್ಮ ನ್ಯಾಯಾನುಸಾರ ತೀರ್ಪುನೀಡಿ ನಿನ್ನನ್ನು ದಂಡಿಸುವರು.</verse>
				<verse number="25">ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು ಅವರು ನಿನ್ನಲ್ಲಿ ಕೋಪ ತೀರಿಸಿಕೊಳ್ಳುವರು; ನಿನ್ನ ಮೂಗುಕಿವಿಗಳನ್ನು ಕತ್ತರಿಸಿಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವರು; ನಿನ್ನ ಗಂಡು ಹೆಣ್ಣು ಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವುದು.</verse>
				<verse number="26">ನಿನ್ನ ವಸ್ತ್ರಗಳನ್ನು ಸೆಳೆದು, ನಿನ್ನ ಚಂದದ ಒಡವೆಗಳನ್ನು ಕಳಚಿಬಿಡುವರು.</verse>
				<verse number="27">ಹೀಗೆ ನಾನು ನಿನ್ನ ಲಂಪಟತನವನ್ನೂ ನೀನು ಈಜಿಪ್ಟಿನಲ್ಲಿ ಇದ್ದಂದಿನಿಂದ ನಡೆದುಬಂದ ನಿನ್ನ ಸೂಳೆತನವನ್ನೂ ನಿನ್ನಿಂದ ತೊಲಗಿಸುವೆನು. ಆಮೇಲೆ ನೀನು ಅವರ ಕಡೆಗೆ ಇನ್ನು ಕಣ್ಣೆತ್ತದೆ ಈಜಿಪ್ಟನ್ನು ನೆನಪಿಗೆ ತಂದುಕೊಳ್ಳಲಾರೆ.”</verse>
				<verse number="28">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಇಗೋ, ನೀನು ಯಾರನ್ನು ಹಗೆಮಾಡುತ್ತೀಯೋ ಯಾರ ಬಗ್ಗೆ ಅಸಹ್ಯಪಡುತ್ತಿಯೋ</verse>
				<verse number="29">ಅವರ ಕೈಗೆ ನಿನ್ನನ್ನು ನಾನು ಒಪ್ಪಿಸುವೆನು. ಅವರು ನಿನ್ನಲ್ಲಿ ಹಗೆ ತೀರಿಸಿಕೊಳ್ಳುವರು. ನೀನು ದುಡಿದದ್ದನ್ನೆಲ್ಲಾ ಅಪಹರಿಸಿ, ನಿನ್ನನ್ನು ಬಟ್ಟಬರಿದುಮಾಡಿ ಬಿಟ್ಟುಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ಹಾದರವು, ಹೌದು, ನಿನ್ನ ಲಂಪಟತನ ಹಾಗು ಸೂಳೆತನ ಬಯಲಿಗೆ ಬರುವುವು.</verse>
				<verse number="30">ಈ ವಿಪತ್ತುಗಳು ನಿನಗೆ ಸಂಭವಿಸುವುದಕ್ಕೆ, ನೀನು ಜನಾಂಗಗಳನ್ನು ಮೋಹಿಸಿ ಅವರ ವಿಗ್ರಹಗಳಿಂದ ನಿನ್ನನ್ನೇ ಹೊಲಸುಮಾಡಿಕೊಂಡಿದ್ದೇ ಕಾರಣ.</verse>
				<verse number="31">ನೀನು ನಿನ್ನ ಅಕ್ಕನ ಹಾದಿಯಲ್ಲೆ ನಡೆದುಕೊಂಡದ್ದರಿಂದ ಅವಳು ಕುಡಿದ ಪಾತ್ರೆಯನ್ನೇ ನಿನ್ನ ಕೈಗೆ ಕೊಡುವೆನು.”</verse>
				<verse number="32">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಆಳವೂ ಅಗಲವೂ ಬಹಳ ಹಿಡಿಯುವುದೂ ಆದ ನಿನ್ನ ಅಕ್ಕನ ಪಾತ್ರೆಯಲ್ಲೇ ನೀನೂ ಕುಡಿದು ಹಾಸ್ಯಕ್ಕೂ ಕುಚೋದ್ಯಕ್ಕೂ ಗುರಿಯಾಗುವೆ. ಸಮಾರಿಯಳೆಂಬ ನಿನ್ನ ಅಕ್ಕನು ಕುಡಿದ ಬೆಚ್ಚುಬೆರಗಿನಾ ಕೊಡದಿಂದಲೇ</verse>
				<verse number="33">ನೀನೂ ಕುಡಿದು, ಕುಡಿದು ಪೂರಾ ಅಮಲೇರಿ ದುಃಖಭರಿತಳಾಗುವೆ. ಅದರಲ್ಲಿ ಒಂದು ತೊಟ್ಟನ್ನೂ ಉಳಿಸದೆ ಕುಡಿಯುವೆ.</verse>
				<verse number="34">ಅದರ ಬೋಕಿಗಳನ್ನು ಕಚ್ಚಿ, ನೆಕ್ಕಿ, ನಿನ್ನ ಮೊಲೆಗಳನ್ನು ಬಗೆದುಕೊಳ್ಳುವೆ. ಇದು ನನ್ನ ಅಪ್ಪಣೆ ಎಂಬುದೇ ಸರ್ವೇಶ್ವರನಾದ ದೇವರ ನುಡಿ.</verse>
				<verse number="35">ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ. ‘ನೀನು ನನ್ನನ್ನು ಮರೆತು, ನನಗೆ ಬೆನ್ನುಮಾಡಿದ್ದರಿಂದ ನಿನ್ನ ಲಂಪಟತನದ ಮತ್ತು ಸೂಳೆತನದ ಫಲವನ್ನು ಅನುಭವಿಸಬೇಕು.’</verse>
				<verse number="36">ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಒಹೊಲಳಿಗೂ ಒಹೊಲೀಬಳಿಗೂ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವಾಗಿದೆಯೇ? ಹಾಗಾದರೆ ಅವರ ದುರಾಚಾರಗಳನ್ನು ಅವರಿಗೆ ತಿಳಿಸು.</verse>
				<verse number="37">ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಸಿಕ್ತವಾಗಿದೆ, ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡುಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಆಹುತಿಕೊಟ್ಟಿದ್ದಾರೆ.</verse>
				<verse number="38">ಇದಲ್ಲದೆ, ನನಗೆ ಈ ಅಪರಾಧವನ್ನು ನಡೆಸಿದ್ದಾರೆ: ಆಹುತಿಕೊಟ್ಟ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರಪಡಿಸಿ, ನಾನು ನೇಮಿಸಿದ ಸಬ್ಬತ್ ದಿನವನ್ನು ಅಶುದ್ಧ ಮಾಡಿದರು.</verse>
				<verse number="39">ತಮ್ಮ ಮಕ್ಕಳನ್ನು ಕೊಂದು, ತಮ್ಮ ವಿಗ್ರಹಗಳಿಗೆ ಅರ್ಪಿಸಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಸೇರಿ ಅಪವಿತ್ರಮಾಡಿದರು; ಹೌದು, ನನ್ನ ಮಂದಿರದ ನಟ್ಟನಡುವೆ ಇದನ್ನು ನಡೆಸಿದರು.</verse>
				<verse number="40">“ಇಷ್ಟರಲ್ಲಿ ದೂತನನ್ನು ಕಳುಹಿಸಿ ಪುರುಷರನ್ನು ದೂರದಿಂದ ಕರೆಯಿಸಿಕೊಂಡರು. ಇಗೋ, ಅವರೂ ಬಂದರು. ಎಲೌ ಹೆಂಗಸೇ, ಅವರಿಗಾಗಿ ನೀನು ಸ್ನಾನಮಾಡಿ, ಕಣ್ಣಿಗೆ ಕಾಡಿಗೆ ಹಚ್ಚಿ,</verse>
				<verse number="41">ನಿನ್ನನ್ನು ಆಭರಣಗಳಿಂದ ಸಿಂಗರಿಸಿಕೊಂಡು ವೈಭವದ ಮಂಚದ ಮೇಲೆ ಕೂತಿರುವೆ. ಅದರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿರುವೆ.</verse>
				<verse number="42">ಅಲ್ಲಿ ವಿನೋದ ಪ್ರಿಯರ ದೊಡ್ಡ ಗುಂಪಿನವರ ಕಳಕಳವಾಯಿತು; ಅರಣ್ಯದಿಂದ ಕರೆಯಿಸಿಕೊಂಡ ಕುಡುಕರು ನಾಡಾಡಿಗರೊಂದಿಗೆ ಸೇರಿ ಅಸ್ಸೀರಿಯರಿಬ್ಬರ ಕೈಗೆ ಕಡಗವನ್ನು ತೊಡಿಸಿ, ಅವರ ತಲೆಗೆ ಸುಂದರ ಕಿರೀಟವನ್ನಿಟ್ಟರು.</verse>
				<verse number="43">ಆಗ ನಾನು - ‘ಆಹಾ, ಕಳೆಗುಂದಿದವಳಿಗೆ ಇನ್ನೂ ವ್ಯಭಿಚಾರವೇ! ಇವರು ಅವಳೊಂದಿಗೆ ಅವಳು ಇವರೊಂದಿಗೆ ಜಾರತನ ಮಾಡುತ್ತಾರಲ್ಲಾ’ ಎಂದುಕೊಂಡೆ.</verse>
				<verse number="44">ಸೂಳೆಯನ್ನು ಸೇರುವ ಹಾಗೆ ಈ ಜನರು ಅವಳನ್ನು ಸೇರಿದರು; ಹೌದು, ಕೆಟ್ಟಹೆಂಗಸರಾದ ಒಹೊಲಳನ್ನೂ ಒಹೊಲೀಬಳನ್ನೂ ಸೇರಿದರು.</verse>
				<verse number="45">ಸದ್ಧರ್ಮಿಗಳು ಅವರಿಗೆ ನ್ಯಾಯತೀರಿಸಿ ವ್ಯಭಿಚಾರಿಣಿಯರಿಗೂ ರಕ್ತಹರಿಸುವ ಹೆಂಗಸರಿಗೂ ತಕ್ಕ ದಂಡನೆಯನ್ನು ವಿಧಿಸುವರು; ಅವರು ವ್ಯಭಿಚಾರಿಣಿಯರು, ಅವರ ಕೈ ರಕ್ತಸಿಕ್ತವಾಗಿದೆ.”</verse>
				<verse number="46">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಈ ಹೆಂಗಸರ ದಂಡನೆಗಾಗಿ ಸಭೆಯನ್ನು ಸೇರಿಸುವೆನು. ಇವರನ್ನು ಸೂರೆಗೆ ಒಳಗಾಗಿಸಿ ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು.</verse>
				<verse number="47">ಸಭೆಯವರು ಇವರ ಮೇಲೆ ಕಲ್ಲುತೂರಿ, ಕತ್ತಿಗಳಿಂದ ಸಂಹರಿಸಿ, ಇವರ ಗಂಡುಹೆಣ್ಣು ಮಕ್ಕಳನ್ನು ಕೊಂದು, ಇವರ ಮನೆಗಳನ್ನು ಬೆಂಕಿಯಿಂದ ಸುಟ್ಟುಬಿಡುವರು.</verse>
				<verse number="48">ಹೀಗೆ ನಾನು ನಾಡಿನೊಳಗಿಂದ ಲಂಪಟತನವನ್ನು ತೊಲಗಿಸುವೆನು; ಇದರಿಂದ ಸಮಸ್ತ ಮಹಿಳೆಯರಿಗೂ ನಿಮ್ಮ ಲಂಪಟತನವನ್ನೂ ಅನುಸರಿಸಬಾರದೆಂಬ ಬುದ್ಧಿ ಬರುವುದು.</verse>
				<verse number="49">ನಿಮ್ಮ ಲಂಪಟತನದ ಫಲವನ್ನು ನಿಮಗೇ ತಿನ್ನಿಸುವರು; ನಿಮ್ಮ ವಿಗ್ರಹಗಳಿಂದಾದ ನಿಮ್ಮ ಪಾಪದ ಫಲವನ್ನು ನೀವು ಅನುಭವಿಸಿ, ನಾನೇ ಸರ್ವೇಶ್ವರನಾದ ದೇವರು ಎಂದು ತಿಳಿದುಕೊಳ್ಳುವಿರಿ.”</verse>
			</chapter>
			<chapter number="24">
				<verse number="1">ಒಂಬತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸರ್ವೇಶ್ವರಸ್ವಾಮಿ ಈ ವಾಣಿಯನ್ನು ನನಗೆ ದಯಪಾಲಿಸಿದರು.</verse>
				<verse number="2">“ನರಪುತ್ರನೇ, ಈ ದಿನದ ಇದೇ ದಿನದ ಹೆಸರನ್ನು ಬರೆದುಕೋ; ಇದೇ ದಿನದಲ್ಲಿ ಬಾಬಿಲೋನಿನ ಅರಸನು ಜೆರುಸಲೇಮಿಗೆ ಮುತ್ತಿಗೆ ಹಾಕಿದ್ದಾನೆ.</verse>
				<verse number="3">ಈ ದ್ರೋಹಿವಂಶಕ್ಕೆ ದೃಷ್ಟಾಂತಕೊಟ್ಟು ಹೀಗೆ ಹೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಹಂಡೆಯನ್ನು ಒಲೆಯ ಮೇಲಿಡು, ಮೇಲಿಡು, ಅದರಲ್ಲಿ ನೀರನ್ನು ಹೊಯ್ಯಿಸು;</verse>
				<verse number="4">ಮಾಂಸಖಂಡಗಳನ್ನು, ತೊಡೆ ಮುಂದೊಡೆ ಮೊದಲಾದ ಒಳ್ಳೆಯ ಖಂಡಗಳನ್ನೆಲ್ಲಾ ಅದರಲ್ಲಿ ಒಟ್ಟಿಗೆ ಹಾಕು, ಉತ್ತಮವಾದ ಎಲುಬುಗಳನ್ನು ಅದರಲ್ಲಿ ತುಂಬಿಸು.</verse>
				<verse number="5">ಹಿಂಡಿನಲ್ಲಿ ಶ್ರೇಷ್ಠವಾದುದನ್ನು ತೆಗೆದುಕೋ; ಹಂಡೆಯ ತಳದಲ್ಲಿ ಎಲುಬುಗಳನ್ನು ರಾಶಿಯಾಗಿ ಒಟ್ಟು; ಚೆನ್ನಾಗಿ ಕುದಿಸು; ಹೌದು, ಎಲುಬುಗಳನ್ನು ಅದರಲ್ಲಿ ಬೇಯಿಸು.”</verse>
				<verse number="6">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಹಾ, ರಕ್ತಮಯವಾದ ಪಟ್ಟಣವೇ, ನಿನಗೆ ಧಿಕ್ಕಾರ! ಆ ಹಂಡೆಯ ಕಿಲುಬು ಬಿಟ್ಟುಹೋಗದೆ ಅದರಲ್ಲೇ ಲೆಪ್ಪವಾಗಿದೆಯಲ್ಲಾ! ಮಾಂಸದ ತುಂಡುಗಳನ್ನು ಆರಿಸಿ, ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು.</verse>
				<verse number="7">ಜೆರುಸಲೇಮ್ ನಗರ ಸುರಿಸಿದ ರಕ್ತ ಅದರಲ್ಲೇ ನಿಂತಿದೆ. ಧೂಳು ಮುಚ್ಚೀತೆಂದು ಆ ಪಟ್ಟಣದವರು ಅದನ್ನು ನೆಲದ ಮೇಲೆ ಹೊಯ್ಯದೆ, ಬರೀ ಬಂಡೆಯ ಮೇಲೆ ನಿಲ್ಲಿಸಿರುತ್ತಾರೆ.</verse>
				<verse number="8">ಆ ರಕ್ತದಿಂದ ರೋಷವೆದ್ದು ಮುಯ್ಯಿಗೆ ಮುಯ್ಯಿ ತೀರಿಸಲೆಂದು, ಅದನ್ನು ನಾನು ಇಂಗಗೊಡಿಸದೆ ಬರೀ ಬಂಡೆಯ ಮೇಲೆ ನಿಲ್ಲಿಸಿದ್ದೇನೆ.</verse>
				<verse number="9">ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಹಾ, ರಕ್ತಮಯವಾದ ಪಟ್ಟಣವೇ, ನಿನಗೆ ಧಿಕ್ಕಾರ! ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು.</verse>
				<verse number="10">ತುಂಬಾ ಸೌದೆ ಹಾಕು, ಬೆಂಕಿಯನ್ನುರಿಸು, ಮಾಂಸವನ್ನು ತೀರಾ ಬೇಯಿಸು, ಸಾರನ್ನು ಮಂದಮಾಡು, ಎಲುಬುಗಳು ಬೆಂದುಹೋಗಲಿ.</verse>
				<verse number="11">ಆಮೇಲೆ ಹಂಡೆಯು ಕಾದು ತಾಮ್ರವು ಕೆಂಪಾಗಿ, ಒಳಗಣ ಕಲ್ಮಷವು ಕರಗಿ ಕಿಲುಬು ಇಲ್ಲವಾಗುವಂತೆ, ಅದನ್ನು ಬರಿದುಮಾಡಿ ಕೆಂಡಗಳ ಮೇಲೆ ಇಡು.</verse>
				<verse number="12">ಅದು ನನಗೆ ಕೇವಲ ಪ್ರಯಾಸವನ್ನೂ ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ್ದ ಕಿಲುಬು ಹೋಗಲಿಲ್ಲ. ಬೆಂಕಿಯಿಂದಲೂ ನೀಗಲಿಲ್ಲ.</verse>
				<verse number="13">ಅಂತೆಯೇ ನಿನ್ನ ಲಂಪಟತನ ಅಸಹ್ಯವಾಗಿರುವುದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ಹರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನೂ ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವೆ.</verse>
				<verse number="14">ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ; ಇದು ನಡೆದೇ ತೀರುವುದು, ನಾನು ನೆರವೇರಿಸುವೆನು; ಹಿಂತೆಗೆಯೆನು, ಕ್ಷಮಿಸೆನು, ಕರುಣಿಸೆನು; ನಿನ್ನ ದುರ್ಮಾರ್ಗ ದುಷ್ಕೃತ್ಯಗಳಿಗೆ ಸರಿಯಾಗಿ ನಿನಗೆ ನ್ಯಾಯತೀರ್ಪು ಆಗುವುದು; ಇದು ಸರ್ವೇಶ್ವರನಾದ ದೇವರ ನುಡಿ.”</verse>
				<verse number="15">ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸಿದರು -</verse>
				<verse number="16">“ನರಪುತ್ರನೇ, ಇಗೋ, ಒಂದೇ ಏಟಿನಿಂದ ನಾನು ನಿನಗೆ ನೇತ್ರಾನಂದವಾಗಿರುವವಳನ್ನು ನಿನ್ನಿಂದ ತೆಗೆದುಬಿಡುವೆನು. ಆದರೂ ನೀನು ಗೋಳಾಡಬೇಡ, ಅಳಬೇಡ, ಕಣ್ಣೀರು ಸುರಿಸಬೇಡ.</verse>
				<verse number="17">ಸದ್ದಿಲ್ಲದೆ ಮೊರೆಯಿಡು, ವಿಯೋಗದುಃಖ ತೋರಿಸಬೇಡ. ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.”</verse>
				<verse number="18">“ಹೀಗೆ ಆಜ್ಞೆಯಾಗಲು, ನಾನು ಪ್ರಾತಃಕಾಲದಲ್ಲಿ ಜನರಿಗೆ ಪ್ರವಾದಿಸಿದೆನು; ಸಾಯಂಕಾಲಕ್ಕೆ ನನ್ನ ಪತ್ನಿ ತೀರಿಹೋದಳು; ಮಾರನೆಯ ಬೆಳಿಗ್ಗೆ ನನಗೆ ಅಪ್ಪಣೆಯಾದಂತೆ ನಡೆದುಕೊಂಡೆನು.</verse>
				<verse number="19">ಜನರು, “ನೀನು ಹೀಗೆ ಮಾಡುವುದರಿಂದ ನಾವು ತಿಳಿಯತಕ್ಕದ್ದೇನು? ತಿಳಿಸುವುದಿಲ್ಲವೋ?’ ಎಂದು ನನ್ನನ್ನು ಕೇಳಿದರು.</verse>
				<verse number="20">ಅದಕ್ಕೆ ನಾನು ಹೀಗೆ ಹೇಳಿದೆ: “ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದ್ದಾರೆ -</verse>
				<verse number="21">ಇಸ್ರಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲ, ನೇತ್ರಾನಂದ ಹಾಗು ಪ್ರಾಣಪ್ರಿಯ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಮಾಡಿಸುವೆನು; ನೀವು ಬಿಟ್ಟುಬಂದಿರುವ ನಿಮ್ಮ ಗಂಡು ಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸರ್ವೇಶ್ವರನಾದ ದೇವರು ನುಡಿದಿದ್ದಾರೆ.</verse>
				<verse number="22">ನಾನು ಮಾಡಿದಂತೆ ಆಗ ನೀವೂ ಮಾಡುವಿರಿ, ಅಂದರೆ ಬಟ್ಟೆಯಿಂದ ಬಾಯನ್ನು ಮುಚ್ಚಿಕೊಳ್ಳದೆ,</verse>
				<verse number="23">ಗಾರಿಗೆಯನ್ನು ತಿನ್ನದೆ, ರುಮಾಲನ್ನು ಸುತ್ತಿಕೊಂಡು, ಕೆರಗಳನ್ನು ಮೆಟ್ಟಿಕೊಂಡು ಇರುವಿರಿ; ನೀವು ಗೋಳಾಡುವುದಿಲ್ಲ, ಅಳುವುದಿಲ್ಲ. ಆದರೆ ನಿಮ್ಮ ಅಧರ್ಮದಿಂದ ಕ್ಷೀಣವಾಗಿ ನರಳುವಿರಿ. ಒಬ್ಬರೆದುರಿಗೆ ಒಬ್ಬರು ನರಳುವಿರಿ.</verse>
				<verse number="24">ಈ ವಿಷಯದಲ್ಲಿ ಯೆಜೆಕಿಯೇಲನು ನಿಮಗೆ ಮುಂಗುರುತಾಗಿರುವನು. ಅವನು ಮಾಡಿದಂತೆಯೇ ಎಲ್ಲವನ್ನು ಮಾಡುವಿರಿ; ಇದು ಸಂಭವಿಸುವಾಗ ನಾನೇ ಸರ್ವೇಶ್ವರನಾದ ದೇವರು ಎಂದು ನಿಮಗೆ ಗೊತ್ತಾಗುವುದು.</verse>
				<verse number="25">“ನರಪುತ್ರನೇ, ಅವರಿಗೆ ಬಲಾಧಾರವೂ ನೇತ್ರಾನಂದವೂ ಆದ ಅವರ ಇಷ್ಟು ಸುಂದರ ಆಲಯವನ್ನೂ ಹೃದಯೋಲ್ಲಾಸವಾದ ಅವನ ಗಂಡು ಹೆಣ್ಣುಮಕ್ಕಳನ್ನೂ ನಾನು ನಿರ್ಮೂಲಮಾಡುವ ದಿನದಲ್ಲಿ</verse>
				<verse number="26">ತಪ್ಪಿಸಿಕೊಂಡವನು ನಿನ್ನ ಬಳಿಗೆ ಬಂದೇ ಬರುವನು. ನಡೆದ ಸಂಗತಿಯನ್ನು ನೀನು ಕಿವಿಯಾರೆ ಕೇಳುವಂತೆ ನಿನಗೆ ತಿಳಿಸುವನು.</verse>
				<verse number="27">ಆ ದಿನದಲ್ಲಿ ತಪ್ಪಿಸಿಕೊಂಡವನಿಗಾಗಿ ನೀನು ಬಾಯಿಬಿಡುವೆ, ನಿನ್ನ ಮೂಕತನವನ್ನು ಕಳೆದುಕೊಂಡು ಮಾತಾಡುವೆ; ಹೀಗೆ ನೀನು ಅವರಿಗೆ ಗುರುತಾಗುವೆ. ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”</verse>
			</chapter>
			<chapter number="25">
				<verse number="1">ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -</verse>
				<verse number="2">“ನರಪುತ್ರನೇ, ನೀನು ಅಮ್ಮೋನಿಗೆ ಅಭಿಮುಖವಾಗಿ ಅದನ್ನು ಕುರಿತ ದೈವಸಂಕಲ್ಪವನ್ನು ಪ್ರಕಟಿಸುತ್ತಾ ಅದಕ್ಕೆ ಹೀಗೆ ನುಡಿ:</verse>
				<verse number="3">ಸರ್ವೇಶ್ವರನಾದ ದೇವರ ವಾಕ್ಯವನ್ನು ಕೇಳು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಮ್ಮೋನೇ, ನನ್ನ ಪವಿತ್ರಾಲಯವು ಅಪವಿತ್ರವಾದುದ್ದನ್ನು, ಇಸ್ರಯೇಲ್ ನಾಡು ಪಾಳುಬಿದ್ದುದನ್ನು, ಯೆಹೂದ್ಯವಂಶದವರು ಗಡೀಪಾರಾದುದನ್ನು ನೋಡಿ ನೀನು ಹಿರಿಹಿರಿ ಹಿಗ್ಗಿಹೋದೆ.</verse>
				<verse number="4">ಆದುದರಿಂದ ಇಗೋ, ನಾನು ನಿನ್ನನ್ನು ಮೂಡಣದವರ ವಶವಾಗುವಂತೆ ಮಾಡುವೆನು; ಅವರು ನಿನ್ನಲ್ಲಿ ತಮ್ಮ ಗುಡಾರಗಳನ್ನು ಹಾಕಿ ಪಾಳೆಯಮಾಡಿಕೊಳ್ಳುವರು; ನಿನ್ನ ಹಣ್ಣನ್ನು ತಿನ್ನುವರು; ನಿನ್ನ ಹಾಲನ್ನು ಕುಡಿಯುವರು,</verse>
				<verse number="5">ನಾನು ರಬ್ಬಾಪಟ್ಟಣವನ್ನು ಒಂಟೆಗಳಿಗೆ ಲಾಯವನ್ನಾಗಿ ಹಾಗೂ ಅಮ್ಮೋನ್ ಸೀಮೆಯನ್ನು ಹಿಂಡುಗಳಿಗೆ ರೊಪ್ಪವನ್ನಾಗಿ ಮಾಡುವೆನು; ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.</verse>
				<verse number="6">“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಒದೆದು, ಇಸ್ರಯೇಲ್ ನಾಡನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದಕ್ಕೆ ಬಂದ ಗತಿಗೆ ಹಿಗ್ಗಿಕೊಂಡೆ.</verse>
				<verse number="7">ಆದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ಸುಲಿಗೆಗಾಗಿ ನಿನ್ನನ್ನು ಮ್ಲೇಚ್ಛರಿಗೆ ವಶಪಡಿಸುವೆನು. ಜನಾಂಗಗಳಿಂದ ಕಿತ್ತು, ದೇಶಗಳಿಂದ ನಿನ್ನ ಹೆಸರನ್ನು ಅಳಿಸಿ ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.”</verse>
				<verse number="8">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ಆಹಾ, ಯೆಹೂದವಂಶ ಎಲ್ಲಾ ಜನಾಂಗಗಳ ಹಾಗೆಯೇ ಇದೆ, ವಿಶೇಷವೇನು ಎಂದು ಮೋವಾಬ ಹಾಗೂ ಸೇಯೀರ ಹೇಳಿಕೊಂಡರು.</verse>
				<verse number="9">ಆದುದರಿಂದ ಇಗೋ, ದೇಶಭೂಷಣಗಳಾದ ಮೋವಾಬಿನ ಗಡಿಯ ಪಟ್ಟಣಗಳು, ಅಂದರೆ ಬೇತ್‍ಯೆಷೀಮೋತ್, ಬಾಳ್‍ಮೆಯೋನ, ಕಿರ್ಯಾಥಯಿಮ್ ಎಂಬ ಪಟ್ಟಣಗಳು, ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಡುವೆನು.</verse>
				<verse number="10">ಆ ಸೀಮೆಯನ್ನಲ್ಲದೆ, ಅಮ್ಮೋನನ್ನೂ ಮೂಡಣದವರಿಗೆ ಬಾಧ್ಯವಾಗಿ ಕೊಟ್ಟು, ಅಮ್ಮೋನ್ಯರು ಜನಾಂಗಗಳೊಳಗೆ ನಿರ್ನಾಮವಾಗಬೇಕೆಂಬ ನನ್ನ ಸಂಕಲ್ಪವನ್ನು ನೆರವೇರಿಸುವೆನು;</verse>
				<verse number="11">ಮೋವಾಬ್ಯರಿಗೂ ದಂಡನೆಗಳನ್ನು ವಿಧಿಸದೆ ಬಿಡೆನು. ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”</verse>
				<verse number="12">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ಎದೋಮ್ ಯೆಹೂದವಂಶಕ್ಕೆ ಪ್ರತೀಕಾರಮಾಡಿದೆ; ಮುಯ್ಯಿಗೆ ಮುಯ್ಯಿ ತೀರಿಸಿ ಮಹಾಪರಾಧವನ್ನು ನಡೆಸಿದೆ;</verse>
				<verse number="13">ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಎದೋಮಿನ ಮೇಲೆ ಕೈಯೆತ್ತಿ, ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ, ತೇಮೊನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ, ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.</verse>
				<verse number="14">ನಾನು ಎದೋಮಿಗೆ ನನ್ನ ಜನರಾದ ಇಸ್ರಯೇಲರ ಕೈಯಿಂದ ಮುಯ್ಯಿತೀರಿಸುವೆನು; ಅವರು ನನ್ನ ಕೋಪರೋಷಗಳಿಗೆ ತಕ್ಕ ಹಾಗೆ ಅದಕ್ಕೆ ಮಾಡುವರು; ನನ್ನ ಪ್ರತೀಕಾರವು ಎದೋಮಿನ ಅನುಭವಕ್ಕೆ ಬರುವುದು; ಇದು ಸರ್ವೇಶ್ವರನಾದ ದೇವರ ನುಡಿ.”</verse>
				<verse number="15">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಫಿಲಿಷ್ಟಿಯರು ಜುದೇಯಕ್ಕೆ ಪ್ರತೀಕಾರ ಮಾಡಿದ್ದಾರೆ; ಹೌದು, ಮುಯ್ಯಿಗೆ ಮುಯ್ಯಿ ತೀರಿಸುತ್ತಾ, ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ದೀರ್ಘದ್ವೇಷದಿಂದ ಹಾಳುಮಾಡಿದ್ದಾರೆ;</verse>
				<verse number="16">ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ಫಿಲಿಷ್ಟಿಯರ ಮೇಲೆ ಕೈಯೆತ್ತುವೆನು; ಕೆರೇತಿಯರನ್ನು ಕತ್ತರಿಸಿಬಿಟ್ಟು, ಸಮುದ್ರತೀರದಲ್ಲಿನ ಜನಶೇಷವನ್ನು ನಿಶ್ಶೇಷಮಾಡುವೆನು;</verse>
				<verse number="17">ಅವರೆಲ್ಲರನ್ನು ಬಹಳವಾಗಿ ಖಂಡಿಸಿ ಮುಯ್ಯಿಗೆ ಮುಯ್ಯಿ ತೀರಿಸುವೆನು; ಹೀಗೆ ಪ್ರತೀಕಾರಮಾಡುವೆನು, ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”</verse>
			</chapter>
			<chapter number="26">
				<verse number="1">ಹನ್ನೊಂದನೆಯ ವರ್ಷದ ಒಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ದಯಪಾಲಿಸಿದರು:</verse>
				<verse number="2">“ನರಪುತ್ರನೇ, ಜೆರುಸಲೇಮಿನ ವಿಷಯವಾಗಿ ಟೈರ್ ನಗರವು ‘ಅಹಹ, ಜನಾಂಗಗಳಿಗೆ ಅಡ್ಡಿಯಾಗಿದ್ದ ಬಾಗಿಲು ಮುರಿದುಹೋಗಿದೆ, ನನ್ನ ಕಡೆಗೆ ತೆರೆದುಬಿದ್ದಿದೆ; ಜೆರುಸಲೇಮ್ ಹಾಳಾದ ಕಾರಣ ನಾನು ವೃದ್ಧಿಗೊಳ್ಳುವೆನು’ ಎಂದುಕೊಂಡಿತು.”</verse>
				<verse number="3">ಆದುದರಿಂದ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಟೈರೇ, ಇಗೋ ನಿನಗೆ ವಿರುದ್ಧವಾಗಿದ್ದೇನೆ; ಸಮುದ್ರವು ತೆರೆಗಳನ್ನು ಎಬ್ಬಿಸುವಂತೆ ನಾನು ಬಹುಜನಾಂಗಗಳನ್ನು ನಿನ್ನ ವಿರುದ್ಧ ಎಬ್ಬಿಸುವೆನು.</verse>
				<verse number="4">ಅವು ಟೈರಿನ ಪೌಳಿಗೋಡೆಯನ್ನು ಉರುಳಿಸಿ, ಅದರ ಕೊತ್ತಲಗಳನ್ನು ಕೆಡವಿಹಾಕುವುವು; ನಾನು ಅದರ ಮಣ್ಣನ್ನು ಕೆರೆದು, ಅದನ್ನು ಬೋಳುಬಂಡೆಯಾಗಿ ಮಾಡುವೆನು;</verse>
				<verse number="5">ಅದು ಸಮುದ್ರದ ನಡುವೆ ಬಲೆಗಳಿಗೆ ಹಾಸುಬಂಡೆಯಾಗುವುದು; ನಾನೇ ಇದನ್ನು ನುಡಿದಿದ್ದೇನೆ, ಎಂದು ಸರ್ವೇಶ್ವರನಾದ ದೇವರು ಎನ್ನುತ್ತಾರೆ; ಅದು ಜನಾಂಗಗಳಿಗೆ ಸೂರೆಯಾಗುವುದು;</verse>
				<verse number="6">ಬಯಲು ಭೂಮಿಯಲ್ಲಿನ ಅವರ ಕುವರಿಯರು ಖಡ್ಗದಿಂದ ಹತರಾಗುವರು; ನಾನೇ ಸರ್ವೇಶ್ವರ ಎಂದು ಎಲ್ಲರಿಗೂ ಗೊತ್ತಾಗುವುದು.”</verse>
				<verse number="7">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಇಗೋ, ರಾಜಾಧಿರಾಜನೂ ಬಾಬಿಲೋನಿನ ಅರಸನೂ ಆದ ನೆಬೂಕದ್ನೆಚ್ಚರನನ್ನು, ಅಶ್ವ, ರಥ, ರಾಹುತ, ಬಹುಸೈನ್ಯ ಪರಿವಾರ ಇವುಗಳಿಂದ ಕೂಡಿದವನಾಗಿ, ನಾನು ಉತ್ತರದಿಂದ ಟೈರಿನ ಮೇಲೆ ಬರಮಾಡುವೆನು.</verse>
				<verse number="8">ಅವನು ಬಯಲು ಭೂಮಿಯಲ್ಲಿ ನಿನ್ನ ಕುವರಿಯರನ್ನು ಖಡ್ಗದಿಂದ ಹತಿಸಿ, ನಿನಗೆ ವಿರುದ್ಧ ಒಡ್ಡುಕಟ್ಟಿ, ದಿಬ್ಬಹಾಕಿ, ಗುರಾಣಿಯೆತ್ತಿರುವವರನ್ನು ಕಳುಹಿಸಿ,</verse>
				<verse number="9">ತನ್ನ ಭಿತ್ತಿಭೇದಕಯಂತ್ರಗಳಿಂದ ನಿನ್ನ ಪೌಳಿಗೋಡೆಯನ್ನು ಹೊಡೆಯಿಸಿ, ತನ್ನ ಆಯುಧಗಳಿಂದ ನಿನ್ನ ಕೊತ್ತಲಗಳನ್ನು ಒಡೆದುಬಿಡುವನು.</verse>
				<verse number="10">ಅವನ ಲೆಕ್ಕವಿಲ್ಲದ ಕುದುರೆಗಳಿಂದೆದ್ದ ಧೂಳು ನಿನ್ನನ್ನು ಮುಸುಕುವುದು; ಒಡಕು ಬಿದ್ದ ಕೋಟೆಯೊಳಗೆ ಶತ್ರು ನುಗ್ಗುವ ಪ್ರಕಾರ ಅವನು ನಿನ್ನ ಬಾಗಿಲುಗಳೊಳಗೆ ನುಗ್ಗುವಾಗ ರಾಹುತ, ಸರಕುಗಾಡಿ, ರಥ, ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಅದರುವುವು.</verse>
				<verse number="11">ಅವನು ತನ್ನ ಕುದುರೆಗಳ ಗೊರಸುಗಳಿಂದ ನಿನ್ನ ಬೀದಿಗಳನ್ನು ತುಳಿಸಿ, ಖಡ್ಗದಿಂದ ನಿನ್ನ ಜನರನ್ನು ಸಂಹರಿಸಿ, ನಿನ್ನ ಬಲವಾದ ಕಲ್ಲುಕಂಬಗಳನ್ನು ಕೆಡಹುವನು.</verse>
				<verse number="12">ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ವಿನೋದಭವನಗಳನ್ನು ಕೆಡವಿ, ನಿನ್ನ ಕಲ್ಲುಮರಮಣ್ಣುಗಳನ್ನು ಸಮುದ್ರದ ಪಾಲುಮಾಡುವರು.</verse>
				<verse number="13">ನಾನು ನಿನ್ನ ಸಂಗೀತಗಳ ಧ್ವನಿಯನ್ನು ನಿಲ್ಲಿಸಿಬಿಡುವೆನು; ನಿನ್ನ ಕಿನ್ನರಿಗಳ ನುಡಿ ಇನ್ನು ಕೇಳಿಸದು.</verse>
				<verse number="14">ನಾನು ನಿನ್ನನ್ನು ಬೋಳುಬಂಡೆಮಾಡುವೆನು; ನೀನು ಬಲೆಗಳಿಗೆ ಹಾಸುಬಂಡೆಯಾಗುವೆ; ಇನ್ನು ನೀನು ಪುನಃ ನಿರ್ಮಾಣ ಹೊಂದಲಾರೆ; ಸರ್ವೇಶ್ವರನಾದ ನಾನು ಅಪ್ಪಣೆಕೊಟ್ಟಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.”</verse>
				<verse number="15">ಸರ್ವೇಶ್ವರನಾದ ದೇವರು ಟೈರ್ ನಗರಕ್ಕೆ ಹೀಗೆ ಹೇಳುತ್ತಾರೆ - “ನಿನ್ನ ಮಧ್ಯದಲ್ಲಿ ಕಗ್ಗೊಲೆಯುಂಟಾಗಿ, ಗಾಯಗೊಂಡವರು ನರಳುತ್ತಿರಲು, ನೀನು ಧಡಮ್ಮನೆ ಬೀಳುವ ಶಬ್ದಕ್ಕೆ ದ್ವೀಪಗಳು ಅದರುವವಲ್ಲವೆ?</verse>
				<verse number="16">ಆಗ ಸಮುದ್ರದ ಸುತ್ತುಮುತ್ತಲಿನ ಎಲ್ಲ ಒಡೆಯರು ತಮ್ಮ ಸಿಂಹಾಸನಗಳಿಂದಿಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ಕಸೂತಿ ವಸ್ತ್ರಗಳನ್ನು ಕಿತ್ತೆಸೆದು, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಕ್ಕರಿಸಿ, ಕ್ಷಣಕ್ಷಣವೂ ನಡುಗುತ್ತಾ ನಿನಗೆ ಬೆಚ್ಚಿಬೆರಗಾಗುವರು.</verse>
				<verse number="17">“ಇವರು ನಿನ್ನ ಕುರಿತು, ‘ನಾವಿಕರ ನಿವಾಸವೇ, ಹೆಸರುವಾಸಿಯ ನಗರಿಯೇ, ಸಮುದ್ರದಿಂದ ಬಲಗೊಂಡ ಪಟ್ಟಣವೇ, ನೀನು ತೀರಾ ಹಾಳಾಗಿರುವೆ. ಸಮುದ್ರಸಂಚಾರಿಗಳಿಗೆಲ್ಲಾ ಭಯಾಸ್ಪದರಾಗಿದ್ದ ನಿನ್ನ ನಿವಾಸಿಗಳು ತೀರಾ ಹಾಳಾದರು.</verse>
				<verse number="18">ಈ ನಿನ್ನ ಪತನ ದಿನದಲ್ಲಿ ಕರಾವಳಿಯು ನಡುಗುತ್ತದೆ; ನೀನು ಅಳಿದುಹೋದುದಕ್ಕೆ ಸಮುದ್ರದ್ವೀಪಗಳು ತತ್ತರಿಸುತ್ತವೆ.’ ಎಂಬ ಶೋಕಗೀತೆಯನ್ನೆತ್ತುವರು.”</verse>
				<verse number="19">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: - “ನಾನು ನಿನ್ನನ್ನು ಹಾಳೂರು ಮಾಡಿ ನಿರ್ಜನ ಪಟ್ಟಣಗಳ ಗತಿಗೆ ತಂದು, ನೀನು ಜಲರಾಶಿಯಲ್ಲಿ ಮುಣುಗಿಹೋಗುವಂತೆ ನಿನ್ನ ಮೇಲೆ ಮಹಾಸಾಗರವನ್ನು ಉಕ್ಕಿಸುವೆನು.</verse>
				<verse number="20">ಆಗ ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ, ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ನಿವಾಸಿಯಾಗುವಂತೆ, ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲೇ ಸೇರಿಸುವೆನು.</verse>
				<verse number="21">ನಿನ್ನನ್ನು ಪೂರ್ತಿಯಾಗಿ ಧ್ವಂಸಮಾಡುವೆನು; ನೀನು ಇಲ್ಲವಾಗುವೆ; ಎಷ್ಟು ಹುಡುಕಿದರೂ ನೀನು ಎಂದಿಗೂ ಸಿಕ್ಕುವುದಿಲ್ಲ; ಇದು ಸರ್ವೇಶ್ವರನಾದ ದೇವರ ನುಡಿ.”</verse>
			</chapter>
			<chapter number="27">
				<verse number="1">ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ಮತ್ತೊಂದು ವಾಣಿ:</verse>
				<verse number="2">“ನರಪುತ್ರನೇ, ಟೈರ್‍ನಗರ ಕುರಿತ ಶೋಕಗೀತೆಯೊಂದನ್ನು ಹಾಡಿ, ಹೀಗೆಂದು ಹೇಳು:</verse>
				<verse number="3">ಸಮುದ್ರದ್ವಾರದಲ್ಲಿ ವಾಸಿಸುವ ನಗರಿಯೇ, ರಾಷ್ಟ್ರಗಳಿಗೂ ಹಲವಾರು ದ್ವೀಪಗಳಿಗೂ ನಡುವೆ ವ್ಯಾಪಾರ ನಡೆಸುವವಳೇ, ಸರ್ವೇಶ್ವರನಾದ ದೇವರು ಹೇಳುವುದನ್ನು ಕೇಳು: “ಟೈರ್ ನಗರಿಯೇ, ‘ನಾನೋರ್ವ ನಾವೆ,’ ‘ಸರ್ವಾಂಗ ಸುಂದರಿ ನಾನಾಗಿರುವೆ,’ ಎಂದು ಕೊಚ್ಚಿಕೊಂಡೆಯಲ್ಲವೆ?</verse>
				<verse number="4">ನಿನ್ನ ನೆಲೆಯಿರುವುದು ಸಮುದ್ರಗಳ ನಡುವೆ ನಿನ್ನ ನಿರ್ಮಿಸಿಹರು ಸರ್ವಾಂಗ ಸುಂದರಿಯಾಗಿಯೇ!</verse>
				<verse number="5">ನಿನ್ನ ಪಕ್ಕಗಳ ಮಾಡಿಹರು ಸೆನೀರಿನ ತುರಾಯಿ ಹಲಗೆಗಳಿಂದ ನಿನ್ನ ಸ್ತಂಭ ರಚಿಸಿಹರು ಲೆಬನೋನಿನ ದೇವದಾರು ಮರಗಳಿಂದ.</verse>
				<verse number="6">ನಿನ್ನ ಹುಟ್ಟುಗಳು ರೂಪಿಸಲಾಗಿವೆ ಬಾಷಾನಿನ ಅಲ್ಲೋನ್ ಮರದಿಂದ ನಿನ್ನ ಮೇಲ್ಮಾಳಿಗೆ ಕಟ್ಟಲಾಗಿದೆ ಕಿತ್ತೀಮ್ ದ್ವೀಪದ ತಿಲಕ ಹಲಗೆಯಿಂದ, ಕೆತ್ತಲಾಗಿದೆ ದಂತದಿಂದ.</verse>
				<verse number="7">ನಿನ್ನ ಹಾಯಿ ನಿನಗೆ ಧ್ವಜವಾಗಲೆಂದೆ ಮಾಡಿಹರು ಈಜಿಪ್ಟಿನ ಕಸೂತಿಯ ನಾರುಮಡಿಯಿಂದ. ನಿನ್ನ ಮೇಲ್ಕಟ್ಟು ಚಿತ್ರಿತವಾಗಿದೆ ಎಲೀಷ ಕರಾವಳಿಯ ಊದಾ ಕಡುಗೆಂಪುಗಳಿಂದ.</verse>
				<verse number="8">ನಿನಗೆ ಹುಟ್ಟುಹಾಕುವರು ಸಿದೋನಿನವರು, ಅರ್ವಾದಿನವರು. ಟೈರ್ ನಗರಿಯೇ, ನಿನ್ನಲ್ಲಿನ ವಿವೇಕಿಗಳೇ ನಿನ್ನ ನಾವಿಕರು.</verse>
				<verse number="9">ನಿನ್ನ ಕಂಡಿಗಳ ಭದ್ರಪಡಿಸಿಹರು, ನಿನ್ನಲ್ಲಿ ಸೇರಿದ್ದ ಗೆಬಲಿನ ಜಾಣರು, ಹಿರಿಯರು. ನಿನಗೆ ಸರಕುಗಳ ತಂದೊಪ್ಪಿಸುತ್ತಿದ್ದರು ಸಕಲ ನಾವೆಗಳು, ಸಕಲ ನಾವಿಕರು.</verse>
				<verse number="10">“ಪಾರಸಿಯರೂ ಲೂದ್ಯರೂ ಪೂಟ್ಯರೂ ನಿನ್ನ ಸೈನ್ಯದ ಭಟರಾಗಿದ್ದರು. ಖೇಡ್ಯ ಶಿರಸ್ತ್ರಾಣಗಳನ್ನು ನಿನ್ನಲ್ಲಿ ನೇತುಹಾಕಿ ನಿನ್ನನ್ನು ಭೂಷಿಸುತ್ತಿದ್ದರು.</verse>
				<verse number="11">ಅರ್ವಾದಿನವರೂ ನಿನ್ನ ಸೈನಿಕರೂ ಸುತ್ತುಮುತ್ತಲು ನಿನ್ನ ತೆನೆಗೋಡೆಗಳಲ್ಲಿ ನಿಂತಿದ್ದರು; ಗಮ್ಮಾದ್ಯರು ನಿನ್ನ ಕೊತ್ತಲಗಳಲ್ಲಿ ಕಾವಲಾಗಿದ್ದರು; ಎಲ್ಲರು ತಮ್ಮ ಖೇಡ್ಯಗಳನ್ನು ಸುತ್ತಮುತ್ತಲು ನಿನ್ನ ಗೋಡೆಗಳಿಗೆ ನೇತುಹಾಕಿ ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದ್ದರು.</verse>
				<verse number="12">ಅಪಾರವಾದ ಬಗೆಬಗೆಯ ಆಸ್ತಿಯು ನಿನಗೆ ಬೇಕಾಗಿತ್ತು. ಆದುದರಿಂದ ತಾರ್ಷೀಷಿನವರು ನಿನ್ನ ಕಡೆಯ ವರ್ತಕರಾಗಿ ಬೆಳ್ಳಿ, ಕಬ್ಬಿಣ, ತವರ ಹಾಗೂ ಸೀಸಗಳನ್ನು ನಿನಗೆ ಒದಗಿಸುತ್ತಿದ್ದರು.</verse>
				<verse number="13">ಯಾವಾನಿನವರು, ತೂಬಲಿನವರು ಮತ್ತು ಮೆಷೆಕಿನವರು ನಿನ್ನ ಪರವಾಗಿ ವ್ಯಾಪಾರಮಾಡಿ ನರಪ್ರಾಣಿಗಳನ್ನು ಹಾಗು ತಾಮ್ರದ ಪಾತ್ರೆಗಳನ್ನು ನಿನಗೆ ಸರಬರಾಜು ಮಾಡುತ್ತಿದ್ದರು;</verse>
				<verse number="14">ತೋಗರ್ಮವಂಶದವರು ಕುದುರೆ, ಜಾತಿಯ ಕುದುರೆ, ಹೇಸರಗತ್ತೆ, ಇವುಗಳನ್ನು ನಿನಗಾಗಿ ತರುತ್ತಿದ್ದರು.</verse>
				<verse number="15">ದೆದಾನಿನವರು ನಿನ್ನ ವರ್ತಕರಾಗಿದ್ದರು; ಬಹುದ್ವೀಪಗಳ ಉತ್ಪತ್ತಿ ನಿನ್ನ ಕೈಗೆ ಸೇರಿತ್ತು. ಗಜದಂತಗಳನ್ನೂ, ಕರೀಮರವನ್ನೂ ನಿನಗೆ ಕಪ್ಪವಾಗಿ ಸಲ್ಲಿಸುತ್ತಿದ್ದರು.</verse>
				<verse number="16">ಕೈಕೆಲಸದ ವಸ್ತುಗಳು ನಿನಗೆ ಅಪಾರವಾಗಿದ್ದವು; ಆದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಮಡಿ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿಯುತ್ತಿದ್ದರು.</verse>
				<verse number="17">ಯೆಹೂದ್ಯರೂ, ಇಸ್ರಯೇಲ್ ನಾಡಿನವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ, ಗೋಧಿ, ‘ಪನ್ನಗ್’, ಜೇನು, ಎಣ್ಣೆ, ಸುಗಂಧತೈಲ, ಈ ಸಾಮಗ್ರಿಗಳನ್ನು ನಿನಗೆ ಸೇರಿಸುತ್ತಿದ್ದರು.</verse>
				<verse number="18">ಕೈಕೆಲಸದ ವಸ್ತುಗಳು ನಿನ್ನಲ್ಲಿ ಅಪಾರವಾಗಿದ್ದುದರಿಂದಲೂ ಅಪರಿಮಿತವಾದ ಬಗೆಬಗೆಯ ಆಸ್ತಿಯೂ ನಿನಗೆ ಬೇಕಾಗಿದ್ದುದರಿಂದಲೂ ದಮಸ್ಕದವರೂ ನಿನ್ನ ಪರವಾಗಿ ವ್ಯಾಪಾರಮಾಡಿ, ಹೆಲ್ಬೋನಿನ ದ್ರಾಕ್ಷಾರಸವನ್ನು ಹಾಗೂ ಚಾಹರಿನ ಉಣ್ಣೆಯನ್ನು ನಿನ್ನಲ್ಲಿ ತುಂಬಿಸುತ್ತಿದ್ದರು.</verse>
				<verse number="19">“ವೆದಾನಿನವರೂ, ಯಾವಾನಿನವರೂ ಉಜಾಲಿನಿಂದ ನಾನಾ ಸರಕುಗಳನ್ನು ತಂದು ನಿನಗೆ ಒಪ್ಪಿಸುತ್ತಿದ್ದರು. ಉಕ್ಕು, ಬಜೆ, ಲವಂಗ, ಚಕ್ಕೆಗಳು ನಿನಗೆ ಆಮದಾಗುತ್ತಿದ್ದವು.</verse>
				<verse number="20">ದೆದಾನಿನವರು ಹಲ್ಲಣಕ್ಕೆ ಸರಿಯಾದ ಒಳ್ಳೆಯ ಜಮಖಾನೆಗಳನ್ನು ನಿನಗೆ ತರುತ್ತಿದ್ದ ವ್ಯಾಪಾರಿಗಳಾಗಿದ್ದರು.</verse>
				<verse number="21">“ಅರಾಬ್ಯರೂ, ಕೇದಾರಿನ ಪ್ರಮುಖರೂ ನಿನ್ನ ಕೈಕೆಳಗಣ ವರ್ತಕರು: ಕುರಿ, ಟಗರು, ಹೋತಗಳನ್ನು ನಿನಗಾಗಿ ಸಾಗಿಸಿಕೊಂಡು ಬರುತ್ತಿದ್ದರು.</verse>
				<verse number="22">ಶೆಬದವರೂ ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ ಕನಕ, ಮುಖ್ಯ ಮುಖ್ಯ ಸುಗಂಧದ್ರವ್ಯ, ಸಮಸ್ತ ಅಮೂಲ್ಯರತ್ನ, ಈ ವಸ್ತುಗಳನ್ನು ನಿನಗಾಗಿ ತರುತ್ತಿದ್ದರು.</verse>
				<verse number="23">ಹಾರಾನ್ ಕನ್ನೆ, ಏದೆನ್ ಸ್ಥಳಗಳವರು ಹಾಗೂ ಶೆಬ, ಅಸ್ಸೀರಿಯಾ, ಕಿಲ್ಮದ್ ಪ್ರಾಂತ್ಯಗಳ ವರ್ತಕರು,</verse>
				<verse number="24">ನಿನ್ನ ವ್ಯಾಪಾರಿಗಳಾಗಿ ಉತ್ತಮಾಂಬರ ಕಸೂತಿಯ ಊದ ನಿಲುವಂಗಿ ಮೊದಲಾದ ಮಾಲುಗಳನ್ನೂ ಹಗ್ಗಗಳಿಂದ ಬಲವಾಗಿ ಬಿಗಿದ ಬಣ್ಣಬಣ್ಣದ ವಸ್ತ್ರಗಳ ಮೂಟೆಗಳನ್ನೂ ನಿನಗಾಗಿ ಕಳುಹಿಸುತ್ತಿದ್ದರು.</verse>
				<verse number="25">ನಿನಗೆ ಬೇಕಾದ ದಿನಸುಗಳನು ತಂದವು ತಾರ್ಷೀಷಿನ ಹಡಗುಗಳು ಸಾಲುಸಾಲಾಗಿ ನೀನು ಭರ್ತಿಯಾಗಿ, ಸಮುದ್ರದ ಮಧ್ಯೆಯಿದ್ದೆ ಬಹು ಭಾರವಾಗಿ.</verse>
				<verse number="26">ಹುಟ್ಟುಹಾಕುವವರು ನಿನ್ನ ಸಿಕ್ಕಿಸಿಹರು ಮಹಾತರಂಗಗಳಿಗೆ ಸಾಗರಮಧ್ಯೆ ಒಡೆದು ಚೂರಾಗಿರುವೆ ಸಿಕ್ಕಿ ಮೂಡಣಗಾಳಿಗೆ.</verse>
				<verse number="27">ವಿನಾಶದಿನದೊಳು ಮುಳುಗಿಹೋಗುವುವು ಸಮುದ್ರದೊಳು ನಿನ್ನ ಆಸ್ತಿ, ನಿನ್ನ ದಿನಸು, ನಿನ್ನ ಸರಕುಗಳು ನಿನ್ನ ನಾವಿಕರು, ಅಂಬಿಗರು, ಕಂಡಿ ಭದ್ರಪಡಿಸುವವರು, ನಿನ್ನ ವ್ಯಾಪಾರಿಗಳು, ಸೈನಿಕರೆಲ್ಲರು, ನಿನ್ನ ಸಿಬ್ಬಂದಿಯೆಲ್ಲವು.</verse>
				<verse number="28">	ನಡುಗುವುವು ಸಮೀಪದ ಪ್ರದೇಶಗಳು ಆ ನಾವಿಕರ ಕೂಗಾಟಕೆ.</verse>
				<verse number="29">ದುಃಖದಿಂದರಚುವರು ಹುಟ್ಟುಹಾಕುವವರು, ಅಂಬಿಗರು, ನಾವಿಕರೆಲ್ಲರು;</verse>
				<verse number="30">ತಮ್ಮ ತಮ್ಮ ಹಡಗುಗಳಿಂದಿಳಿದು, ನೆಲದ ಮೇಲೆ ನಿಂತು. ತಲೆಗೆ ದೂಳೆರಚಿಕೊಂಡು, ಬೂದಿಯಲ್ಲಿ ಹೊರಳಾಡಿಕೊಂಡು,</verse>
				<verse number="31">ತಲೆ ಬೋಳಿಸಿಕೊಂಡು, ಗೋಣಿತಟ್ಟನು ಸುತ್ತಿಕೊಂಡು, ದುಃಖಿಸಿ ಗೋಳಾಡುವರು, ಅಳುವರು ನಿನಗಾಗಿ ನಿಟ್ಟುಸಿರಿಟ್ಟು;</verse>
				<verse number="32">ರೋಧಿಸುವರು, ಪ್ರಲಾಪಿಸುವರು, ಹಾಡುವರು ಶೋಕಗೀತೆಯನ್ನು; ಕಡಲ ನಡುವೆ ಬಿಕೋ ಎನ್ನುವ ಟೈರನ್ನು ಏತಕೆ ಹೋಲಿಸೋಣ? ಎಂದು.</verse>
				<verse number="33">ಅಪಾರ ಐಶ್ವರ್ಯದಿಂದ, ವಾಣಿಜ್ಯ ದಿನಸುಗಳಿಂದ ನೀನು ತುಂಬಿಸಿದೆ ಬಹುರಾಷ್ಟ್ರಗಳನು, ಸಮೃದ್ಧಿಗೊಳಿಸಿದೆ ಭೂರಾಜರನು. ಈಗಾಗಿವೆ ಸಮುದ್ರದ ಪಾಲು ಆ ಸರಕು ಸಾಮಗ್ರಿಗಳೆಲ್ಲವು.</verse>
				<verse number="34">ಮುಳುಗಿಹೋದರು ಅಗಾಧ ಜಲದೊಳು ಸರಕುಸಮೇತ ನಿನ್ನ ಸೇರಿದ್ದ ಜನರು; ಹಾಳಾದೆ ನೀನು ಸಮುದ್ರ ಸಾಗರದೊಳು.</verse>
				<verse number="35">ನಿನ್ನೀ ಗತಿಗೆ ಬೆರಗಾಗಿಹರು ಕರಾವಳಿಯ ಸರ್ವನಿವಾಸಿಗಳು, ರೋಮಾಂಚಿತರಾಗಿಹರು ಮೊಗಗೆಟ್ಟು ರಾಜರಾಜರುಗಳು;</verse>
				<verse number="36">ನಿನ್ನ ನೋಡಿ ಸಿಳ್ಳುಹಾಕುವರು ರಾಷ್ಟ್ರಗಳ ವರ್ತಕರು. ನಾಶವಾದೆ ನೀನು ಪೂರ್ತಿಯಾಗಿ, ಇಲ್ಲವಾದೆ ಇನ್ನೆಂದಿಗು.”</verse>
			</chapter>
			<chapter number="28">
				<verse number="1">ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸದರು -</verse>
				<verse number="2">“ನರಪುತ್ರನೇ, ನೀನು ಟೈರ್ ನಗರದ ರಾಜನಿಗೆ ಹೀಗೆ ನುಡಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಗರ್ವದಿಂದ ‘ಆಹಾ, ನಾನೆ ದೇವರು, ಸಮುದ್ರ ಮಧ್ಯೆ ದೇವರ ಆಸನವನ್ನೇ ಅಲಂಕರಿಸಿದ್ದೇನೆ’, ಎಂದುಕೊಂಡೆ. ನೀನು ನಿನ್ನ ದೇವರಿಗೆ ಸಮನಾಗಿಸಿಕೊಂಡೆಯೋ? ನೀನು ಎಂದಿಗೂ ದೇವರಲ್ಲ, ನೀನೊಬ್ಬ ನರಪ್ರಾಣಿಯಷ್ಟೆ.</verse>
				<verse number="3">ನೀನು ದಾನಿಯೇಲನಿಗಿಂತಲೂ ಬುದ್ಧಿವಂತನೋ? ಹಾಗಾದರೆ ನಿನಗೆ ಮರೆಯಾದ ರಹಸ್ಯ ಯಾವುದೂ ಇಲ್ಲ!</verse>
				<verse number="4">ನಿನ್ನ ಜ್ಞಾನವಿವೇಕಗಳಿಂದ ಐಶ್ವರ್ಯವನ್ನು ಗಳಿಸಿ, ನಿನ್ನ ಬೊಕ್ಕಸಗಳಲ್ಲಿ ಬೆಳ್ಳಿಬಂಗಾರವನ್ನು ತುಂಬಿಸಿಕೊಂಡಿರುವೆ.</verse>
				<verse number="5">ನಿನ್ನ ಅಧಿಕ ಜ್ಞಾನದಿಂದ ಹಾಗು ವ್ಯಾಪಾರದಿಂದ ಸಿರಿಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ಆದುದರಿಂದ ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಹೋಗಿದೆ.</verse>
				<verse number="6">ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ನಿನ್ನನ್ನೆ ದೇವರಿಗೆ ಸಮನಾಗಿಸಿಕೊಂಡಿರುವೆ.</verse>
				<verse number="7">‘ಆದುದರಿಂದ ನಾನು ಅತಿಭಯಂಕರ ಜನಾಂಗದವರಾದ ಮ್ಲೇಚ್ಛರನ್ನು ನಿನ್ನ ಮೇಲೆ ಬೀಳಮಾಡುವೆನು; ಅವರು ನಿನ್ನ ಜ್ಞಾನದ ಸೊಬಗಿನ ಮೇಲೆ ಕತ್ತಿ ಹಿರಿದು, ನಿನ್ನ ಹೊಳಪನ್ನು ಹೊಲಸುಮಾಡುವರು.</verse>
				<verse number="8">ನಿನ್ನನ್ನು ಪಾತಾಳಕ್ಕೆ ತಳ್ಳಿಬಿಡುವರು; ಸಮುದ್ರಮಧ್ಯೆ ಹತರಾದವರ ಗತಿ ನಿನಗೆ ಸಂಭವಿಸುವುದು.</verse>
				<verse number="9">ನಿನ್ನನ್ನು ಸಂಹರಿಸುವವನೆದುರಿಗೆ ನಿಂತು, ‘ನಾನು ದೇವರು’ ಎಂದು ಹೇಳಬಲ್ಲೆಯಾ? ಹತಿಸುವವನ ಕೈಗೆ ನೀನು ಎಂದಿಗೂ ದೇವರಲ್ಲ, ನರಪ್ರಾಣಿಯೇ!</verse>
				<verse number="10">ನೀನು ಅನ್ಯರ ಕೈಯಿಂದ ಸುನ್ನತಿಹೀನರ ಮರಣಕ್ಕೆ ಗುರಿಯಾಗುವೆ; ನಾನೇ ನುಡಿದಿದ್ದೇನೆ, ಇದು ಸರ್ವೇಶ್ವರನಾದ ದೇವರ ಸಂಕಲ್ಪ.”</verse>
				<verse number="11">ಸರ್ವೇಶ್ವರ ದಯಪಾಲಿಸಿದ ಇನ್ನೊಂದು ವಾಣಿ ನನಗೆ ಹೀಗೆಂದಿತು:</verse>
				<verse number="12">“ನರಪುತ್ರನೇ, ನೀನು ಟೈರಿನ ಅರಸನನ್ನು ಕುರಿತು ಶೋಕಗೀತೆಯೊಂದನ್ನು ಹಾಡಿ ಅವನಿಗೆ ಹೀಗೆ ನುಡಿ: ಸರ್ವೇಶ್ವರನಾದ ದೇವರು ಹೀಗೆನ್ನುತ್ತಾರೆ: - “ನೀನು ಸರ್ವಸುಲಕ್ಷಣ ಶಿರೋಮಣಿ ಪರಿಪೂರ್ಣ ಸುಂದರ, ಪೂರ್ಣಜ್ಞಾನಿ!</verse>
				<verse number="13">ನೀನಿದ್ದೆ ದೇವರ ಉದ್ಯಾನವನದ ಏದೆನಿನೊಳು ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ಬೆರುಲ್ಲ, ವೈಡೂರ್ಯ, ನೀಲ, ಕೆಂಪರಲು, ಸ್ಫಟಿಕವೆಂಬ ನವರತ್ನಗಳಿಂದ ಭೂಷಿತನಾಗಿದ್ದೆ ನೀನು. ನಿನ್ನ ಕಿವಿಯೋಲೆ ಆಭರಣಗಳು ಸುವರ್ಣಖಚಿತವಾಗಿದ್ದವು. ನಿನ್ನ ಸೃಷ್ಟಿಯ ದಿನದಂದೇ ಸಿದ್ಧವಾಗಿದ್ದವವು.</verse>
				<verse number="14">ರೆಕ್ಕೆ ತೆರೆದು ನೆರಳು ನೀಡುವ ಕೆರೂಬಿ ನೀನಾಗಿದ್ದೆ ದೇವರ ಪರಿಶುದ್ಧ ಮರೆಯಲ್ಲಿ ನಿನ್ನ ನಾ ನೆಲೆಗೊಳಿಸಿದ್ದೆ. ಕೆಂಡದ ಮಡುಮಧ್ಯೆ ನೀ ವಿಹಾರಮಾಡುತ್ತಿದ್ದೆ.</verse>
				<verse number="15">ಹುಟ್ಟಿದ ದಿನದಿಂದ ಅಪರಾಧವೆಸಗುವವರೆಗೆ ನಿರ್ದೋಷವಾಗಿತ್ತು ನಿನ್ನ ನಡತೆ.</verse>
				<verse number="16">ನೀ ಪಾಪಿಯಾದೆ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಹಿಂಸಾಚಾರಗಳು ತುಂಬಿಕೊಂಡದ್ದರಿಂದ. ಎಂದೇ, ಹೊಲಸೆಂಬಂತೆ ನಿನ್ನ ತಳ್ಳಿಬಿಟ್ಟೆ ದೇವರ ಬೆಟ್ಟದಿಂದ ಕಿತ್ತೆಸೆದುಬಿಟ್ಟೆ ಕೆಂಡದ ನಡು ಮಡುವಿನ ನೆಲೆಯಿಂದ ನೆರಳು ನೀಡುವ ಕೆರೂಬಿಯೇ ಎಸೆಯಿತು ನಿನ್ನನ್ನು ಅಲ್ಲಿಂದ.</verse>
				<verse number="17">ಸೊಬಗಿನ ನಿಮಿತ್ತ ನೀ ಗರ್ವಿಯಾದೆ ಮೆರೆತದಿಂದ ಬುದ್ಧಿಯನ್ನು ಕಳೆದುಕೊಂಡೆ. ಎಂದೇ, ನಾ ನಿನ್ನನ್ನು ದೊಬ್ಬಿಬಿಟ್ಟೆ, ನೆಲಕೆ ಅರಸರ ಕಣ್ಮುಂದೆ ಎಸೆದೆ ಅವರಿಗೆ ಅವರಿಗೆ ನೋಟವಾಗಲೆಂದೆ.</verse>
				<verse number="18">ಅಪಾರ ಅಪರಾಧಗಳಿಂದ, ಅನ್ಯಾಯ ವ್ಯಾಪಾರಗಳಿಂದ ನಿನ್ನಲ್ಲಿನ ಪವಿತ್ರಾಲಯ ಅಶುದ್ಧವಾಯಿತು ನಿನ್ನಿಂದ. ಎಂದೇ, ನಾ ಬರಮಾಡಿದೆ ಬೆಂಕಿಯನು ನಿನ್ನೊಳಗಿಂದ ನೋಡ್ವರೆಲ್ಲರ ಮುಂದೆ ಸುಟ್ಟು ಭಸ್ಮ ಮಾಡಿತು ನಿನ್ನ.</verse>
				<verse number="19">ನಿನ್ನೀ ಗತಿ ನೋಡಿ ಬೆರಗಾದರು ನಿನ್ನನ್ನರಿತ ರಾಷ್ಟ್ರಗಳು ಪೂರ್ತಿಯಾಗಿ ನೀ ಧ್ವಂಸವಾದೆ, ಇಲ್ಲವಾದೆ ಇನ್ನೆಂದಿಗೂ.”</verse>
				<verse number="20">ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:-</verse>
				<verse number="21">“ನರಪುತ್ರನೇ, ನೀನು ಸಿದೋನಿಗೆ ಅಭಿಮುಖನಾಗಿ ಅದರ ಬಗ್ಗೆ ಹೀಗೆ ನುಡಿ -</verse>
				<verse number="22">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಹಾ, ಸಿದೋನೇ, ನಾನು ನಿನಗೆ ವಿರುದ್ಧನಾಗಿ ನಿನ್ನ ಮಧ್ಯದಲ್ಲೆ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣವನ್ನು ದಂಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ, ನಾನೇ ಸರ್ವೇಶ್ವರ ಎಂದು ಎಲ್ಲರಿಗು ಗೊತ್ತಾಗುವುದು.</verse>
				<verse number="23">ನಾನು ಅದರಲ್ಲಿ ವ್ಯಾಧಿಯನ್ನೂ ಅದರ ಚೌಕಗಳಲ್ಲಿ ಸಂಹಾರವನ್ನೂ ಉಂಟುಮಾಡುವೆನು; ಖಡ್ಗವು ಸುತ್ತುಮುತ್ತಲು ಅದರ ಮೇಲೆ ಬೀಸುತ್ತಿರುವಾಗ ಪ್ರಜೆಗಳು ಅದರ ನಡುವೆ ಹತರಾಗಿ ಬೀಳುವರು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ತಿಳಿದುಬರುವುದು.</verse>
				<verse number="24">ಇಸ್ರಯೇಲ್ ವಂಶದವರಿಗೆ ಚುಚ್ಚುವ ಮುಳ್ಳು ಇನ್ನಿರದು; ಹೀನೈಸುವ ನೆರೆಹೊರೆಯವರೆಂಬ ಕಂಟಕದ ಬಾಧೆ ಇನ್ನಾಗದು; ನಾನೇ ಸರ್ವೇಶ್ವರನಾದ ದೇವರು ಎಂದು ಅವರಿಗೆ ವ್ಯಕ್ತವಾಗುವುದು.”</verse>
				<verse number="25">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಜನಾಂಗಗಳಲ್ಲಿ ಚದುರಿಹೋಗಿರುವ ಇಸ್ರಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ದಾಸ ಯಕೋಬನಿಗೆ ನಾನು ಅನುಗ್ರಹಿಸಿದ ಸ್ವಂತ ನಾಡಿನಲ್ಲಿ ವಾಸಿಸುವರು.</verse>
				<verse number="26">ಅಲ್ಲಿ ನಿರ್ಭಯವಾಗಿರುವರು; ಮನೆಗಳನ್ನು ಕಟ್ಟಿಕೊಂಡು, ತೋಟಗಳನ್ನು ಮಾಡಿಕೊಂಡು, ಸುಖವಾಗಿ ವಾಸಿಸುವರು; ಅವರನ್ನು ಹೀನೈಸುವ ನೆರೆಹೊರೆಯವರನ್ನು ನಾನು ದಂಡಿಸಿದ ಮೇಲೆ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ಅವರಿಗೆ ನಿಶ್ಚಯವಾಗುವುದು.”</verse>
			</chapter>
			<chapter number="29">
				<verse number="1">ಹತ್ತನೆಯ ವರ್ಷದ ಹತ್ತನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:</verse>
				<verse number="2">“ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನ ಕಡೆಗೆ ಮುಖಮಾಡಿ ಅವನನ್ನು ಹಾಗು ಈಜಿಪ್ಟಿನವರೆಲ್ಲರನ್ನು ಕುರಿತು ಹೀಗೆ ನುಡಿ -</verse>
				<verse number="3">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಈಜಿಪ್ಟಿನ ಅರಸ ಫರೋಹನೇ, ನದೀಶಾಖೆಗಳ ನಡುವೆ ಒರಗಿಕೊಂಡು ‘ಈ ನದಿ ನನ್ನದೇ. ನನಗಾಗಿಯೇ ಮಾಡಿಕೊಂಡಿದ್ದೇನೆ’ ಎಂದುಕೊಳ್ಳುವ ದೊಡ್ಡ ಮೊಸಳೆ ನೀನು. ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ.</verse>
				<verse number="4">ನಾನು ನಿನ್ನ ದವಡೆಗಳಿಗೆ ಗಾಳಹಾಕುವೆನು; ನಿನ್ನ ನದಿಯ ಮೀನುಗಳು ನಿನ್ನ ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. ಅಂಟಿಕೊಂಡಿರುವ ಆ ಮೀನುಗಳ ಸಹಿತ ನಿನ್ನನ್ನು ನಿನ್ನ ನದಿಯ ಮಧ್ಯೆಯಿಂದ ಈಚೆಗೆ ಎಳೆಯುವೆನು.</verse>
				<verse number="5">ನಿನ್ನನ್ನೂ ನಿನ್ನ ಎಲ್ಲ ಮೀನುಗಳನ್ನೂ ಕಾಡುಪಾಲು ಮಾಡುವೆನು; ನೀನು ಬಯಲಿನಲ್ಲಿ ಬಿದ್ದಿರುವೆ; ನಿನ್ನನ್ನು ಯಾರೂ ಹೊರರು, ಹೂಣಿಡರು; ನಿನ್ನನ್ನು ಭೂಜಂತುಗಳಿಗೂ ಆಕಾಶದ ಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.</verse>
				<verse number="6">“ಆಗ ಈಜಿಪ್ಟಿನ ಸಕಲ ನಿವಾಸಿಗಳು, ‘ಇಸ್ರಯೇಲ್ ವಂಶದವರಿಗೆ ನಾವು ಬರೀ ದಂಟಿನ ಊರುಗೋಲಾದೆವು’ ಎಂದು ನಾಚಿಕೆಪಟ್ಟು ನಾನೇ ಸರ್ವೇಶ್ವರ ಎಂಬುದಾಗಿ ದೃಢಮಾಡಿಕೊಳ್ಳುವರು.</verse>
				<verse number="7">ಈಜಿಪ್ಟೇ, ಇಸ್ರಯೇಲರು ನಿನ್ನ ಮೇಲೆ ಕೈಯಿಡಲು, ನೀನು ಅವರನ್ನು ಮುರಿದು ಅವರೆಲ್ಲರ ಹೆಗಲನ್ನು ಚುಚ್ಚಿದೆ; ನಿನ್ನ ಮೇಲೆ ಊರಿಕೊಳ್ಳಲು, ನೀನು ಒಡೆದು ಅವರೆಲ್ಲರ ನಡುವಿಗೆ ನಡುಕವನ್ನು ಉಂಟುಮಾಡಿದೆ.</verse>
				<verse number="8">ಹೀಗಿರಲು, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ಬರಮಾಡಿ ಜನರನ್ನೂ ಜಾನುವಾರುಗಳನ್ನೂ ನಿನ್ನಿಂದ ನಿರ್ಮೂಲಮಾಡುವೆನು.</verse>
				<verse number="9">ಫರೋಹನು, - ‘ಈ ನದಿ ನನ್ನದೇ, ನಾನೇ ಮಾಡಿಕೊಂಡೆ’ ಎಂದುಕೊಂಡನು. ಈ ಕಾರಣ ಈಜಿಪ್ಟ್ ದೇಶ ಹಾಳುಪಾಳಾಗುವುದು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.</verse>
				<verse number="10">ಇಗೋ, ನಾನು ನಿನಗೂ ನಿನ್ನ ನದಿಗೂ ವಿರುದ್ಧನಾಗಿ ಈಜಿಪ್ಟ್ ದೇಶವನ್ನು ಮಿಗ್ದೋಲಿನಿಂದ ಸೆವೇನೆಯ ತನಕ, ಹೌದು, ಸುಡಾನ್ ಎಲ್ಲೆಯವರೆಗೂ ಪೂರ್ತಿಯಾಗಿ ಹಾಳುಪಾಳುಮಾಡುವೆನು.</verse>
				<verse number="11">ಯಾವ ವ್ಯಕ್ತಿಯೂ ಅಲ್ಲಿ ಹೆಜ್ಜೆಯಿಟ್ಟು ಹಾದುಹೋಗನು; ನಲವತ್ತು ವರ್ಷ ನಿರ್ಜನವಾಗಿರುವುದು.</verse>
				<verse number="12">ಹಾಳುಬಿದ್ದಿರುವ ದೇಶಗಳೊಳಗೆ ಈಜಿಪ್ಟ್ ದೇಶವನ್ನೂ ಹಾಳು ಬೀಳಿಸುವೆನು; ಪಾಳುಬಿದ್ದಿರುವ ಪಟ್ಟಣಗಳೊಳಗೆ ಅದರ ಪಟ್ಟಣಗಳನ್ನೂ ಪಾಳುಬೀಳಿಸುವೆನು; ನಲವತ್ತು ವರ್ಷ ಹಾಗೆಯೇ ಇರುವುವು; ನಾನು ಈಜಿಪ್ಟಿನವರನ್ನು ಜನಾಂಗಗಳಲ್ಲಿ ಚದರಿಸ, ದೇಶವಿದೇಶಗಳಿಗೆ ತೂರಿಬಿಡುವೆನು.</verse>
				<verse number="13">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಲವತ್ತು ವರ್ಷಗಳ ಮೇಲೆ ನಾನು</verse>
				<verse number="14">ಈಜಿಪ್ಟಿನ ದುರವಸ್ಥೆಯನ್ನು ತಪ್ಪಿಸಿ, ಅವರ ಜನ್ಮಭೂಮಿಯಾದ ದಕ್ಷಿಣ ಈಜಿಪ್ಟಿಗೆ ಪುನಃ ಬರಮಾಡುವೆನು. ಅಲ್ಲೇ ಅವರು ನಿಕೃಷ್ಟ ರಾಜ್ಯದವರಾಗಿರುವರು.</verse>
				<verse number="15">ಆ ರಾಜ್ಯ ಸಮಸ್ತ ರಾಜ್ಯಗಳಲ್ಲಿ ಕನಿಷ್ಟವೆನಿಸಿಕೊಳ್ಳುವುದು; ಮಿಕ್ಕ ಜನಾಂಗಗಳಿಗಿಂತ ತಾನು ದೊಡ್ಡದೆಂದು ಅದು ಇನ್ನು ತಲೆಯೆತ್ತದು; ಆ ಜನಾಂಗಗಳ ಮೇಲೆ ಇನ್ನು ದೊರೆತನ ಮಾಡಲಾರದಂತೆ ನಾನು ಅದನ್ನು ಕ್ಷೀಣಗತಿಗೆ ತರುವೆನು.</verse>
				<verse number="16">ಈಜಿಪ್ಟ್ ಇನ್ನು ಇಸ್ರಯೇಲ್ ವಂಶದವರ ಭರವಸೆಯಾಗದು; ಅದರ ಕಡೆಗೆ ಕಣ್ಣೆತ್ತುವಾಗ ದೇವದ್ರೋಹದ ನೆನಪು ಇಸ್ರಯೇಲರಲ್ಲಿ ಹುಟ್ಟುವುದು; ನಾನೇ ಸರ್ವೇಶ್ವರ ಎಂದು ಅವರಿಗೆ ಮನದಟ್ಟಾಗುವುದು.”</verse>
				<verse number="17">ಇಪ್ಪತ್ತೇಳನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -</verse>
				<verse number="18">“ನರಪುತ್ರನೇ, ಬಾಬಿಲೋನಿನ ನೆಬೂಕದ್ನೆಚ್ಚರನು ಟೈರಿಗೆ ಮುತ್ತಿಗೆ ಹಾಕಿ, ತನ್ನ ಸೈನಿಕರಿಂದ ಬಹು ಶ್ರಮದ ಸೇವೆಯನ್ನು ಮಾಡಿಸಿದ್ದಾನೆ; ಪ್ರತಿಯೊಬ್ಬನ ತಲೆ ಬೋಳಾಗಿದೆ. ಪ್ರತಿಯೊಬ್ಬನ ಹೆಗಲು ಕಾಯಿಕಟ್ಟಿದೆ; ಆದರೂ ಆ ಮುತ್ತಿಗೆಯಲ್ಲಿ ಅವನು ಪಟ್ಟ ಶ್ರಮಕ್ಕೆ ಅವನಿಗಾಗಲಿ ಅವನ ಸೈನಿಕರಿಗಾಗಲಿ ಟೈರಿನಿಂದ ಫಲವೇನೂ ಸಿಕ್ಕಲಿಲ್ಲ.</verse>
				<verse number="19">ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನು ಬಾಬಿಲೋನಿನ ಅರಸ ನೆಬೂಕದ್ನೆಚ್ಚರನಿಗೆ ಈಜಿಪ್ಟ್ ದೇಶವನ್ನು ಕೊಡುವೆನು; ಅವನು ಅದರ ಜನರನ್ನೂ ಆಸ್ತಿಪಾಸ್ತಿಯನ್ನೂ ಒಯ್ದು, ಆ ದೇಶವನ್ನು ಸೂರೆಮಾಡಿ ಕೊಳ್ಳೆಹೊಡೆಯುವನು; ಅದೇ ಅವನ ಸೈನ್ಯಕ್ಕೆ ಸಿಕ್ಕುವ ಸಂಬಳ.</verse>
				<verse number="20">ಅವನು ಸೈನ್ಯಸಮೇತ ನನ್ನ ಪರವಾಗಿ ಸೇವೆಮಾಡಿದ್ದರಿಂದ ಅವನು ಪಟ್ಟ ಶ್ರಮಕ್ಕೆ ಪ್ರತಿಫಲವಾಗಿ ನಾನು ಈಜಿಪ್ಟ್ ದೇಶವನ್ನು ಅವನಿಗೆ ಕೊಟ್ಟಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="21">“ಆ ದಿನದಲ್ಲಿ ನಾನು ಇಸ್ರಯೇಲ್ ವಂಶಕ್ಕೆ ಕೋಡುಮೂಡಿಸಿ ಆ ವಂಶದವರ ಮಧ್ಯೆ ನಿನ್ನ ಬಾಯನ್ನು ಬಿಚ್ಚುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಖಚಿತವಾಗುವುದು.</verse>
			</chapter>
			<chapter number="30">
				<verse number="1">ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸಿದರು -</verse>
				<verse number="2">“ನರಪುತ್ರನೇ, ನೀನು ಈ ದೈವೋಕ್ತಿಯನ್ನು ಪ್ರಕಟಿಸು - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅರಚಿಕೊಳ್ಳಿರಿ, ಅಯ್ಯೋ ದುರ್ದಿನವೇ! ಆ ದಿನ ಹತ್ತಿರವಾಯಿತು:</verse>
				<verse number="3">ಹೌದು, ಸಮೀಪಿಸಿತು ಸರ್ವೇಶ್ವರನ ದಿನ, ಕಾರ್ಮುಗಿಲ ದಿನ ಅದು ರಾಷ್ಟ್ರಗಳಿಗೆ ನ್ಯಾಯತೀರಿಸತಕ್ಕ ಕಾಲ.</verse>
				<verse number="4">ಖಡ್ಗವು ಈಜಿಪ್ಟಿನ ಮೇಲೆ ಬೀಳುವುದು; ಅಲ್ಲಿ ಪ್ರಜೆಗಳು ಹತರಾಗಲು ಸುಡಾನಿನಲ್ಲಿಯೂ ಸಂಕಟವಾಗುವುದು; ಈಜಿಪ್ಟಿನಲ್ಲಿ ಹಲವರು ಸತ್ತುಬೀಳುವರು, ಅದರ ಅಸ್ತಿಭಾರ ಹಾಳಾಗುವುದು.</verse>
				<verse number="5">“ಸುಡಾನರು, ಲೀಡಿಯರು, ಲೂದ್ಯರು, ಬಗೆಬಗೆಯ ಸಕಲವಿದೇಶೀಯರು, ಕೂಬ್ಯರು, ಮಿತ್ರರಾಜ್ಯದವರು ಇವರೆಲ್ಲ ಈಜಿಪ್ಟಿನವರೊಂದಿಗೆ ಖಡ್ಗದಿಂದ ಹತರಾಗುವರು.”</verse>
				<verse number="6">ಸರ್ವೇಶ್ವರ ಇಂತೆನ್ನುತ್ತಾರೆ - “ಈಜಿಪ್ಟಿಗೆ ಆಧಾರವಾದವರು ಬೀಳುವರು, ಅದರ ಶಕ್ತಿ ಮದವು ಇಳಿದುಹೋಗುವುದು; ಅಲ್ಲಿನ ಜನರು ಮಿಗ್ದೋಲಿನಿಂದ ಸೆವೇನೆಯವರೆಗೆ ಖಡ್ಗದಿಂದ ಹತರಾಗುವರು. ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="7">ಹಾಳಾದ ದೇಶಗಳಲ್ಲಿ ಈ ದೇಶವೂ ಹಾಳಾಗುವುದು. ಪಾಳುಬಿದ್ದಿರುವ ಪಟ್ಟಣಗಳಲ್ಲಿ ಅದರ ಪಟ್ಟಣಗಳೂ ಪಾಳುಬಿದ್ದಿರುವುವು.</verse>
				<verse number="8">ನಾನು ಈಜಿಪ್ಟಿಗೆ ಬೆಂಕಿಹಚ್ಚಿ, ಅದರ ಸಹಾಯಕರನ್ನೆಲ್ಲ ನಾಶಮಾಡಿದ ಮೇಲೆ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”</verse>
				<verse number="9">“ಆ ದಿನಗಳಲ್ಲಿ ದೂತರು ನನ್ನ ಸನ್ನಿಧಾನದಿಂದ ಹೊರಟು, ಹಡಗುಗಳಲ್ಲಿ ಪ್ರಯಾಣಮಾಡಿ, ನಿಶ್ಚಿಂತರಾದ ಸುಡಾನರನ್ನು ಹೆದರಿಸುವರು; ಈಜಿಪ್ಟಿನ ವಿನಾಶ ದಿನದಲ್ಲಿ ಸುಡಾನರಿಗೂ ಸಂಕಟವಾಗುವುದು; ಇಗೋ, ಆ ದಿನ ಬಂದಿತು!”</verse>
				<verse number="10">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಯಿಂದ ಈಜಿಪ್ಟಿನ ಅಸಂಖ್ಯಾತ ಪ್ರಜೆಯನ್ನು ಕೊನೆಗಾಣಿಸುವೆನು.</verse>
				<verse number="11">ಆ ದೇಶವನ್ನು ನಾಶಪಡಿಸಲು ಅವನನ್ನು ಅತಿಭಯಂಕರ ಜನಾಂಗದವರಾದ ಅವನ ಸೈನಿಕರೊಡನೆ ಬರಮಾಡುವೆನು; ಅವರು ಈಜಿಪ್ಟಿನ ಮೇಲೆ ಕತ್ತಿ ಹಿರಿದು ದೇಶವನ್ನು ಹತರಾದವರಿಂದ ತುಂಬಿಸುವರು.</verse>
				<verse number="12">ನಾನು ನದೀ ಶಾಖೆಗಳನ್ನು ಬತ್ತಿಸಿ, ದೇಶವನ್ನು ದುಷ್ಟರ ಕೈಗೆ ವಶಮಾಡಿಬಿಡುವೆನು; ಹೌದು, ದೇಶವನ್ನೂ ಅದರಲ್ಲಿನ ಸಮಸ್ತವನ್ನೂ ಅನ್ಯರ ಕೈಯಿಂದ ಹಾಳುಮಾಡಿಸುವೆನು; ಸರ್ವೇಶ್ವರನಾದ ನಾನೇ ನುಡಿದಿದ್ದೇನೆ.”</verse>
				<verse number="13">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನಾನು ಮೆಂಫೀಸ್‍ನ ವಿಗ್ರಹಗಳನ್ನೆಲ್ಲ ಒಡೆದು, ಕೊನೆಗಾಣಿಸುವೆನು; ಈಜಿಪ್ಟ್ ದೇಶದಲ್ಲಿ ಇನ್ನು ಯಾವ ಪ್ರಭುವೂ ಇರನು; ನಾನು ಆ ದೇಶಕ್ಕೆ ಭಯವನ್ನೊಡ್ಡುವೆನು.</verse>
				<verse number="14">ನಾನು ದಕ್ಷಿಣ ಈಜಿಪ್ಟನ್ನು ಹಾಳುಮಾಡಿ, ಚೋವನಿಗೆ ಬೆಂಕಿಯಿಕ್ಕಿ, ತೆಬೆಸಿನ ರಾಜಧಾನಿಯನ್ನು ದಂಡಿಸಿ,</verse>
				<verse number="15">ಈಜಿಪ್ಟಿಗೆ ರಕ್ಷಣಾ ಕೋಟೆಯಾದ ಪೆಲೂಸಿಯಮ್‍ನ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ, ತೆಬೆಸಿನ ನಿವಾಸಿಗಳನ್ನೆಲ್ಲಾ ಕತ್ತರಿಸಿಬಿಡುವೆನು.</verse>
				<verse number="16">ನಾನು ಈಜಿಪ್ಟಿಗೆ ಕಿಚ್ಚನ್ನು ಹತ್ತಿಸಲು ಪೆಲೂಸಿಯಮ್ ಪ್ರಾಣಸಂಕಟ ಪಡುವುದು; ತೆಬೆಸ್ ಭಂಗಕ್ಕೆ ಈಡಾಗುವುದು; ಮೆಂಫೀಸ್ ಮೇಲೆ ವೈರಿಗಳು ಮಧ್ಯಾಹ್ನದಲ್ಲೇ ಬೀಳುವರು.</verse>
				<verse number="17">ಓನಿನ ಮತ್ತು ಪೀಬೆತಿನ ಯುವಕರು ಖಡ್ಗದಿಂದ ಹತರಾಗುವರು; ಅಲ್ಲಿನ ನಿವಾಸಿಗಳು ಸೆರೆಯಾಗಿ ಹೋಗುವರು.</verse>
				<verse number="18">ಈಜಿಪ್ಟ್ ಹೊರಿಸಿದ ನೊಗಗಳನ್ನು ನಾನು ತಹಪನೇಸಿನಲ್ಲಿ ಮುರಿಯುವಾಗ, ಅಲ್ಲಿ ಹೊತ್ತು ಮೂಡದು, ಅದರ ಶಕ್ತಿಮದವು ಅಡಗಿಹೋಗುವುದು. ಕಾರ್ಮುಗಿಲು ಅದನ್ನು ಆವರಿಸುವುದು. ಅದರ ಯುವತಿಯರು ಸೆರೆಗೆ ಒಯ್ಯಲ್ಪಡುವರು.</verse>
				<verse number="19">ಹೀಗೆ ನಾನು ಈಜಿಪ್ಟರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”</verse>
				<verse number="20">ಹನ್ನೊಂದನೆಯ ವರ್ಷದ ಮೊದಲನೆಯ ತಿಂಗಳಿನ ಏಳನೆಯ ದಿವಸದಲ್ಲಿ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು.</verse>
				<verse number="21">“ನರಪುತ್ರನೇ, ನಾನು ಈಜಿಪ್ಟಿನ ಅರಸ ಫರೋಹನ ಕೈಯನ್ನು ಮುರಿದುಬಿಟ್ಟಿದ್ದೇನೆ; ಇಗೋ, ಅದನ್ನು ಯಾರೂ ಕಟ್ಟಲಿಲ್ಲ, ಔಷಧ ಹಚ್ಚಲಿಲ್ಲ. ಅದು ಖಡ್ಗ ಹಿಡಿಯುವಷ್ಟು ಬಲಗೊಳ್ಳುವಂತೆ ಯಾರೂ ಬಟ್ಟೆ ಸುತ್ತಿ ಅದನ್ನು ಬಿಗಿಸಲಿಲ್ಲ.</verse>
				<verse number="22">ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಈಜಿಪ್ಟಿನ ಅರಸ ಫರೋಹನಿಗೆ ವಿರುದ್ಧನಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿ ಇರುವುದನ್ನೂ, ಮುರಿದದ್ದನ್ನೂ ಪೂರ್ತಿಯಾಗಿ ಮುರಿದುಬಿಟ್ಟು, ಖಡ್ಗವು ಅವನ ಕೈಯೊಳಗಿನಿಂದ ಬೀಳುವಂತೆ ಮಾಡುವೆನು.</verse>
				<verse number="23">ಈಜಿಪ್ಟರನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು.</verse>
				<verse number="24">ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸಿ, ನನ್ನ ಖಡ್ಗವನ್ನು ಅವನ ಕೈಗೆ ಕೊಟ್ಟು, ಫರೋಹನ ಕೈಗಳನ್ನು ಮುರಿಸುವಾಗ ಗಾಯದಿಂದ ಪ್ರಾಣಸಂಕಟ ಪಡುವವನಂತೆ ಫರೋಹನು ಆ ಅರಸನ ಮುಂದೆ ನರಳಾಡುವನು.</verse>
				<verse number="25">ನಾನು ಬಾಬಿಲೋನಿನ ಅರಸನ ಕೈಗಳನ್ನು ಬಲಪಡಿಸುವೆನು; ಫರೋಹನ ಕೈಗಳಾದರೋ ಜೋಲುಬೀಳುವುವು; ನಾನು ನನ್ನ ಖಡ್ಗವನ್ನು ಬಾಬಿಲೋನಿನ ಅರಸನಿಗೆ ಎತ್ತುವೆನು. ಅವನು ಅದನ್ನು ಈಜಿಪ್ಟ್ ದೇಶದ ಮೇಲೆ ಎತ್ತುವನು. ಆಗ ನಾನೇ ಸರ್ವೇಶ್ವರ ಎಂದು ಎಲ್ಲರಿಗೆ ಗೊತ್ತಾಗುವುದು.</verse>
				<verse number="26">ನಾನು ಈಜಿಪ್ಟರನ್ನು ಜನಾಂಗಗಳಲ್ಲಿ ಚದರಿಸಿ ದೇಶವಿದೇಶಗಳಿಗೆ ತೂರಿಬಿಡುವಾಗ ನಾನೇ ಸರ್ವೇಶ್ವರ ಎಂದು ಅವರಿಗೆ ತಿಳಿದುಬರುವುದು.”</verse>
			</chapter>
			<chapter number="31">
				<verse number="1">ಹನ್ನೊಂದನೆಯ ವರ್ಷದ ಮೂರನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ವಾಣಿ ಇದು:</verse>
				<verse number="2">“ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನಿಗೂ ಅವನ ಅಸಂಖ್ಯಾತ ಪ್ರಜೆಗೂ ಹೀಗೆ ನುಡಿ:</verse>
				<verse number="3">ದೊಡ್ಡಸ್ತಿಕೆಯಲ್ಲಿ ನಿನಗೆ ಸರಿಸಮಾನನಾರು? ಲೆಬನೋನಿನಲ್ಲಿ ದೇವದಾರು ವೃಕ್ಷವೊಂದಿತ್ತು; ಅದರ ರೆಂಬೆಗಳು ಅಂದ, ಅದರ ನೆರಳು ದಟ್ಟ ಅದರ ಎತ್ತರ ಬಹಳ, ಅದರ ತುದಿ ಮೇಘಚುಂಬಿತ.</verse>
				<verse number="4">ಅದನ್ನು ಬೆಳೆಸಿದವು ಜಲಪ್ರವಾಹಗಳು ವೃದ್ಧಿಗೊಳಿಸಿತದನು ಮಹಾನದಿಯೊಂದು ಸುತ್ತಿಕೊಂಡಿದ್ದವು ಅಲ್ಲಿನ ಉದ್ಯಾನವನವನ್ನು ನದಿ ಶಾಖೆಗಳು ಮರಗಿಡಗಳಿಗೆ ನದಿ ನೀಡಿತ್ತು ತನ್ನ ಕಾಲುವೆಗಳನು.</verse>
				<verse number="5">ಇಂತಿರಲು ವನವೃಕ್ಷಗಳಲೆಲ್ಲ ಆ ವೃಕ್ಷ ಅತ್ಯುನ್ನತವಾಗಿತ್ತು ಅದರ ರೆಂಬೆಗಳು ನಿಬಿಡವಾಗಿದ್ದವು, ಉದ್ದುದ್ದ ಚಾಚಿಕೊಂಡಿದ್ದವು.</verse>
				<verse number="6">ಆ ರೆಂಬೆಗಳಲ್ಲಿ ಗೂಡುಮಾಡಿದ್ದವು ಆಕಾಶದ ಪಕ್ಷಿಗಳೆಲ್ಲವು ಅದರಡಿಯಲಿ ಮರಿಗಳನೀಯುತ್ತಿದ್ದವು ಭೂಜಂತುಗಳೆಲ್ಲವು ಅದರ ನೆರಳನಾಶ್ರಯಿಸುತ್ತಿದ್ದವು ಮಹಾಜನಾಂಗಗಳೆಲ್ಲವು.</verse>
				<verse number="7">ಬೇರಿಗೆ ಬೇಕಾದ ಜಲಾಸರೆ ಪಡೆದಿದ್ದ ಆ ಮರವು ಎತ್ತರದಿಂದ, ನೀಳವಾದ ರೆಂಬೆಗಳಿಂದ ಕಂಗೊಳಿಸಿತು.</verse>
				<verse number="8">ದೇವೋದ್ಯಾನದ ಇತರ ದೇವದಾರುಗಳಿಂದ ಅದನು ಮುಚ್ಚಲಾಗಲಿಲ್ಲ. ತುರಾಯಿ ಮರಗಳು ಅದರ ರೆಂಬೆಗಳಷ್ಟು ಉದ್ದವಾಗಿರಲಿಲ್ಲ. ಅತ್ತಿಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ. ದೇವರವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಿರಲಿಲ್ಲ.</verse>
				<verse number="9">ನಾನದನು ಅಷ್ಟೊಂದು ಸುಂದರಗೊಳಿಸಿದ್ದೆ ಶಾಖೋಪಶಾಖೆಗಳಿಂದ ಅಸೂಯೆಪಡುತ್ತಿದ್ದವು ಏದೇನಿನ ದೇವೋದ್ಯಾನದ ವೃಕ್ಷಗಳೆಲ್ಲ.</verse>
				<verse number="10">“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆ ವೃಕ್ಷವು ಬಹಳ ಎತ್ತರವಾಗಿ ಬೆಳೆದು ತನ್ನ ತುದಿ ಮೋಡಕ್ಕೆ ಮುಟ್ಟುವಷ್ಟು ನೀಳವಾಗಿದ್ದುದರ ಬಗ್ಗೆ ಗರ್ವಪಟ್ಟಿತು.</verse>
				<verse number="11">ಅದುದರಿಂದ ನಾನು ಅದನ್ನು ರಾಷ್ಟ್ರಗಳಲ್ಲಿ ಮಹಾಬಲಿಷ್ಠನಾದವನ ಕೈಗೆ ಕೊಟ್ಟುಬಿಟ್ಟಿದ್ದೇನೆ. ಅವನು ಅದರ ಕೆಟ್ಟತನಕ್ಕೆ ತಕ್ಕಂತೆ ಅದನ್ನು ದಂಡಿಸೇ ತೀರುವನು; ನಾನು ಅದನ್ನು ತಳ್ಳಿಹಾಕಿದ್ದೆ.</verse>
				<verse number="12">ಅತಿಭಯಂಕರ ರಾಷ್ಟ್ರದವರಾದ ಮ್ಲೇಚ್ಛರು ಅದನ್ನು ಕಡಿದುಹಾಕಿ ಹೋಗಿಬಿಟ್ಟಿದ್ದಾರೆ; ಅದರ ರೆಂಬೆಗಳು ಗುಡ್ಡಗಳಲ್ಲೂ ಎಲ್ಲ ಹಳ್ಳಕೊಳ್ಳಗಳಲ್ಲೂ ಬಿದ್ದಿವೆ; ಅದರ ಕೊಂಬೆಗಳು ದೇಶದ ಎಲ್ಲ ತೊರೆಗಳ ಹತ್ತಿರ ಮುರಿದುಬಿದ್ದಿವೆ; ಲೋಕದ ಸಮಸ್ತ ಜನಾಂಗಗಳು ಅದರ ನೆರಳಿನಿಂದ ತೊಲಗಿಹೋಗಿವೆ.</verse>
				<verse number="13">“ಬಿದ್ದ ಆ ಬುಡದ ಮೇಲೆ ಎಲ್ಲ ಆಕಾಶ ಪಕ್ಷಿಗಳು ಎರಗುವುವು; ಅದರ ರೆಂಬೆಗಳನ್ನು ಸಮಸ್ತ ಭೂಜಂತುಗಳು ತುಳಿದಾಡುವುವು.</verse>
				<verse number="14">ನೀರಾವರಿಯ ಯಾವ ಮರವು ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು ತನ್ನ ತುದಿಯಿಂದ ಮೋಡ ಮುಟ್ಟದಿರಲೆಂದು ಹಾಗೂ ನೀರನ್ನು ಹೀರುತ್ತಲೇ ಇರುವ ದೊಡ್ಡ ದೊಡ್ಡ ಮರಗಳು ಎತ್ತರವಾಗಿ ಚಿಗುರಿಕೊಳ್ಳದಿರಲೆಂದು ಹೀಗಾಯಿತು; ಆದರೆ ಎಲ್ಲ ಮರಗಳು ಮರಣದ ಪಾಲಾಗುವುವು. ಅಧೋಲೋಕವೇ ಅವುಗಳ ಗತಿ; ಪಾತಾಳಕ್ಕೆ ಇಳಿದುಹೋದವರ ಬಳಿಗೆ, ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವುವು.”</verse>
				<verse number="15">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಆ ವೃಕ್ಷ ಪಾತಾಳಕ್ಕೆ ಇಳಿದುಹೋದ ದಿನದಲ್ಲಿ ನಾನು ದುಃಖದ ಚಿಹ್ನೆಗಳನ್ನು ಏರ್ಪಡಿಸಿದೆ; ಅದರ ವಿಯೋಗಕ್ಕಾಗಿ ನಾನು ಮಹಾನದಿಯನ್ನು ಮರೆಮಾಡಿ, ನದಿಯ ಶಾಖೆಗಳನ್ನು ತಡೆದುಬಿಟ್ಟೆ; ಜಲಪ್ರವಾಹವು ನಿಂತುಹೋಯಿತು; ಅದಕ್ಕಾಗಿ ಲೆಬನೋನು ಗೋಳಿಡುವಂತೆ ಮಾಡಿದೆ. ಭೂಮಿಯ ಸಕಲ ವೃಕ್ಷಗಳು ಆ ದುಃಖಕ್ಕೆ ಮೂರ್ಛೆಹೋದವು.</verse>
				<verse number="16">ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು; ಮತ್ತು ಪೂರ್ವಕಾಲದಲ್ಲಿ ಅಧೋಲೋಕದ ಪಾಲಾದ ಏದೆನಿನ ಎಲ್ಲ ಮರಗಳು, ಲೆಬನೋನಿನ ಉತ್ತಮೋತ್ತಮ ವೃಕ್ಷಗಳು, ಅಂತು ನೀರಾವರಿಯ ಸಕಲ ಸಸ್ಯಗಳೂ ಅಲ್ಲಿ ಸಂತೈಸಿಕೊಂಡವು.</verse>
				<verse number="17">ಇದಲ್ಲದೆ, ಅದಕ್ಕೆ ತೋಳಬಲವಾಗಿ ಜನಾಂಗಗಳ ಮಧ್ಯೆ ಅದರ ನೆರಳನ್ನು ಆಶ್ರಯಿಸಿದವರು, ಅದರೊಂದಿಗೆ ಪಾತಾಳಕ್ಕಿಳಿದು, ಖಡ್ಗಹತರ ಜೊತೆಗೆ ಸೇರಿದರು.</verse>
				<verse number="18">ಇಂಥಾ ವೈಭವದಿಂದ ಹಾಗೂ ಮಹಿಮೆಯಿಂದ ಕೂಡಿದ ನೀನು, ಏದೆನಿನ ವೃಕ್ಷಗಳಲ್ಲಿ ಯಾವುದಕ್ಕಿಂತ ಕಡಿಮೆ? ಆದರೂ ನೀನು ಏದೆನಿನ ವೃಕ್ಷಗಳೊಂದಿಗೆ ಅಧೋಲೋಕಕ್ಕೆ ದೂಡಿದವನಾಗಿ ಸುನ್ನತಿಹೀನರ ನಡುವೆ ಖಡ್ಗಹತರ ಸಂಗಡ ಒರಗಿಹೋಗುವೆ. ಫರೋಹನೂ ಅವನ ಎಲ್ಲಾ ಪ್ರಜೆಗಳೂ ಇದೇ ಗತಿಯನ್ನು ಹೊಂದುವರು. ಇದು ಸರ್ವೇಶ್ವರನಾದ ದೇವರ ನುಡಿ.”</verse>
			</chapter>
			<chapter number="32">
				<verse number="1">ಹನ್ನೆರಡನೆಯ ವರ್ಷದ ಹನ್ನೆರಡನೆಯ ತಿಂಗಳಿನ ಮೊದಲನೆಯ ದಿನ ಸರ್ವೇಶ್ವರಸ್ವಾಮಿ ನನಗೆ ಅನುಗ್ರಹಿಸಿದ ವಾಣಿ ಇದು:</verse>
				<verse number="2">“ನರಪುತ್ರನೇ, ನೀನು ಈಜಿಪ್ಟಿನ ಅರಸ ಫರೋಹನನ್ನು ಕುರಿತು ಶೋಕಗೀತೆಯೊಂದನ್ನು ನುಡಿ: “ನೀನು ಮೃಗರಾಜನೆನಿಸಿಕೊಂಡಿರುವೆ ಜನಾಂಗಗಳಲ್ಲಿ, ಇಗೋ ದೊಡ್ಡ ಮೊಸಳೆಯಾಗಿಬಿಟ್ಟಿರುವೆ ಮಹಾನದಿಯಲ್ಲಿ. ನೀನಿದ್ದ ನದಿಗಳ ಭೇದಿಸಿಕೊಂಡು ಬಂದು, ಕಾಲಿಂದ ನೀ ಕಲಕಿರುವೆ ಅದರ ನೀರನ್ನು, ತುಳಿದು ಬದಿಮಾಡಿರುವೆ ಜನಾಂಗವೆಂಬ ಹೊಳೆಯನ್ನು.”</verse>
				<verse number="3">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಗುಂಪಾಗಿ ಕೂಡಿದ ಬಹುಜನಾಂಗಗಳ ಕೈಯಿಂದ, ನಾ ನಿನ್ನ ಮೇಲೆ ಬೀಸುವೆ ಬಲೆಯೊಂದ.</verse>
				<verse number="4">ಆಕಾಶದ ಪಕ್ಷಿಗಳು ನಿನ್ನ ಮೇಲೆರಗುವಂತೆ, ಸಮಸ್ತ ಭೂಜಂತುಗಳು ನಿನ್ನಿಂದ ತೃಪ್ತಿಗೊಳ್ಳುವಂತೆ, ನಿನ್ನನೆಸೆದುಬಿಡುವೆ ನೆಲದ ಮೇಲೆ ಬಯಲಿಗೆ.</verse>
				<verse number="5">ಚೆಲ್ಲಲಾಗುವುದು ನಿನ್ನ ಮಾಂಸಖಂಡಗಳನು ಗುಡ್ಡೆಗಳ ಮೇಲೆ, ತುಂಬಲಾಗುವುದು ಕಣಿವೆಗಳನು ನಿನ್ನ ಮೂಳೆ ಮುಸುಕುಗಳಿಂದಲೆ.</verse>
				<verse number="6">ತೋಯಿಸುವೆನು ಸಮನಾಡನು ನಿನ್ನ ರಕ್ತಪ್ರವಾಹದಿಂದ, ಹಳ್ಳಕೊಳ್ಳಗಳು ತುಂಬಿ ತುಳುಕುವುವು ಅದರಿಂದ.</verse>
				<verse number="7">ನಿನ್ನ ಬೆಳಕನು ನಾ ನಂದಿಸಿ ಕತ್ತಲಾಗಿಸುವಾಗ, ಮುಚ್ಚುವೆನು ಸೂರ್ಯಚಂದ್ರ ನಕ್ಷತ್ರಗಳನು ಮೋಡಮುಸುಕಿನಿಂದ.</verse>
				<verse number="8">ನಿನ್ನ ಮೇಲೆ ಗಗನದಲಿ ಮಿನುಗುವ ಸಕಲ ಜ್ಯೋತಿಗಳನು ಮುಸುಕು ಮಾಡುವೆನು, ನಿನ್ನ ನಾಡಿನೊಳು ಕತ್ತಲನೊಡ್ಡುವೆನು.</verse>
				<verse number="9">“ನಿನ್ನ ವಿನಾಶದ ಸುದ್ದಿಯನ್ನು, ರಾಷ್ಟ್ರಗಳಲ್ಲಿ ನಿನಗೇ ತಿಳಿಯದ ದೇಶಗಳಿಗೆ ನಾನು ಮುಟ್ಟಿಸುವಾಗ ಆ ದೇಶಗಳು ಕಳವಳಪಡುವುವು.</verse>
				<verse number="10">ಹೌದು, ಬಹುರಾಷ್ಟ್ರಗಳು ನಿನ್ನ ಗತಿಗೆ ಬೆಚ್ಚಿಬೆರಗಾಗುವಂತೆ ಮಾಡುವೆನು; ನಾನು ನನ್ನ ಖಡ್ಗವನ್ನು ಅವುಗಳ ಅರಸರ ಕಣ್ಣೆದುರಿಗೆ ಬೀಳಿಸುವಾಗ ಅವರು ನಿನ್ನ ದುರ್ಗತಿಯನ್ನು ನೆನೆಸಿ ಭಯಭ್ರಾಂತರಾಗುವರು; ನಿನ್ನ ಪತನದಿಂದ ಪ್ರತಿಯೊಬ್ಬನು ತನ್ನ ಪ್ರಾಣಾಪಾಯಕ್ಕೆ ಕ್ಷಣಕ್ಷಣವು ನಡುಗುವನು.”</verse>
				<verse number="11">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಬಾಬಿಲೋನಿನ ಅರಸನ ಖಡ್ಗ ನಿನ್ನ ಮೇಲೆ ಬೀಳುವುದು.</verse>
				<verse number="12">ನಿನ್ನ ಬಹುಪ್ರಜೆಯನ್ನು ಅತಿ ಭಯಾನಕ ಜನಾಂಗದವರಾದ ಬಲಿಷ್ಠರ ಕತ್ತಿಗಳಿಂದ ಸಂಹರಿಸುವೆನು; ಈಜಿಪ್ಟ್ ಹೆಚ್ಚಳಪಡುವ ವಸ್ತುಗಳನ್ನೇ ಅವರು ಸೂರೆಮಾಡುವರು; ಅದರ ಜನ ನಿರ್ನಾಮವಾಗುವುದು.</verse>
				<verse number="13">ದೊಡ್ಡ ಪ್ರವಾಹಗಳ ತೀರದಲ್ಲಿನ ಪಶುಗಳನ್ನೆಲ್ಲಾ ನಾಶಪಡಿಸುವೆನು; ಆ ನೀರನ್ನು ಕಲಕಲು ಇನ್ನು ಯಾವ ಮನುಷ್ಯನೂ ಅಲ್ಲಿ ಹೆಜ್ಜೆಯಿಡನು, ಯಾವ ಪಶುವೂ ಅಲ್ಲಿ ಗೊರಸಿಕ್ಕದು.</verse>
				<verse number="14">ಆಗ ಆ ನೀರು ತಿಳಿಯಾಗುವಂತೆ, ಆ ಪ್ರವಾಹಗಳು ಎಣ್ಣೆಯ ಹಾಗೆ ಹರಿಯುವಂತೆ ಮಾಡುವೆನು; ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="15">ಈಜಿಪ್ಟಿನಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ಕರಗಿಸಿ ಆ ದೇಶವನ್ನು ಹಾಳುಪಾಳುಮಾಡಿ ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಸರ್ವೇಶ್ವರ ಎಂದು ಗೊತ್ತಾಗುವುದು.</verse>
				<verse number="16">ಪ್ರಲಾಪಿಸುವವರು ಈ ಶೋಕಗೀತವನ್ನು ಹಾಡಲಿ; ಜನಾಂಗಗಳ ಯುವತಿಯರು ಹೀಗೆ ಗೋಳಿಡಲಿ; ಈಜಿಪ್ಟಿಗಾಗಿಯೂ ಅಲ್ಲಿನ ಬಹುಪ್ರಜೆಗಾಗಿಯೂ ದುಃಖಿಸಿ ಈ ಗೀತೆಯನ್ನು ಹಾಡಲಿ; ಇದು ಸರ್ವೇಶ್ವರನಾದ ದೇವರ ನುಡಿ.”</verse>
				<verse number="17">ಹನ್ನೆರಡನೆಯ ವರ್ಷದ ಹದಿನೈದನೆಯ ದಿನದಲ್ಲಿ ಸರ್ವೇಶ್ವರ ಈ ವಾಣಿಯನ್ನು ದಯಪಾಲಿಸಿದರು -</verse>
				<verse number="18">“ನರಪುತ್ರನೇ, ನೀನು ಈಜಿಪ್ಟಿನ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ ಅವರನ್ನೂ ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.</verse>
				<verse number="19">ಈಜಿಪ್ಟೇ, ನೀನು ಸೌಂದರ್ಯದಲ್ಲಿ ಯಾರಿಗೆ ಕಡಿಮೆ? ಪಾತಾಳಕ್ಕೆ ಇಳಿದು ನೆಲಸು ಸುನ್ನತಿಹೀನರ ನಡುವೆ.</verse>
				<verse number="20">ಖಡ್ಗಹತರ ಮಧ್ಯೆ ಬೀಳು, ಕತ್ತಿಯನ್ನು ಎತ್ತಿಹಿಡಿಯಲಾಗಿದೆ. ಅಧೋಲೋಕದವರೇ, ಈಜಿಪ್ಟನ್ನು ಅದರ ಅನಂತ ಪ್ರಜೆಗಳನ್ನೂ ಎಳೆದುಕೊಳ್ಳಿ.</verse>
				<verse number="21">ಪಾತಾಳದಲ್ಲಿನ ಬಲಿಷ್ಠಶೂರರು ಅದನ್ನೂ ಅದರ ಸಹಾಯಕರನ್ನೂ ನೋಡಿ, “ಓಹೋ, ಇವರು ಸುನ್ನತಿಹೀನರು, ಖಡ್ಗಹತರು, ಇಳಿದುಬಂದು ಒರಗಿಬಿದ್ದರು’ ಎಂದುಕೊಳ್ಳುವರು.</verse>
				<verse number="22">“ಅಸ್ಸೀರಿಯ ಮತ್ತು ಅದರ ಜನತೆ ಯಾವಾಗಲು ಅಲ್ಲಿರುವುವು; ಆ ಜನರ ಗೋರಿಗಳು ಅದನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸಂಹೃತರು, ಖಡ್ಗಹತರು.</verse>
				<verse number="23">ಅವರ ಗೋರಿಗಳು ಅಧೋಲೋಕದ ಅಗಾಧ ಸ್ಥಳಗಳಲ್ಲಿ ಹರಡಿಕೊಂಡಿವೆ; ಅವರು ಅಸ್ಸೀರಿಯದ ಗೋರಿಯ ಸುತ್ತಲಿದ್ದಾರೆ; ಜೀವಲೋಕದಲ್ಲಿ ಭೀಕರವಾಗಿದ್ದ ಇವರೆಲ್ಲರೂ ಸಂಹೃತರು, ಖಡ್ಗಹತರು.</verse>
				<verse number="24">“ಏಲಾಮೂ ಅಲ್ಲಿದೆ; ಅದರ ಪ್ರಜೆಯೆಲ್ಲಾ ಅದರ ಗೋರಿಯನ್ನು ಸುತ್ತಿಕೊಂಡಿವೆ.ಅವರೆಲ್ಲರೂ ಸಂಹೃತರು, ಖಡ್ಗಹತರು; ಜೀವಲೋಕದಲ್ಲಿ ಭೀಕರವಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.</verse>
				<verse number="25">ಏಲಾಮು ಮಲಗುವುದಕ್ಕೆ, ಹತರಾದ ಅದರ ಪ್ರಜೆಗಳೆಲ್ಲರ ನಡುವೆ ಸ್ಥಳವನ್ನು ಏರ್ಪಡಿಸಿದ್ದಾರೆ, ಅವರ ಗೋರಿಗಳು ಅದರ ಸುತ್ತಮುತ್ತಲಿವೆ. ಅವರೆಲ್ಲರೂ ಸುನ್ನತಿಹೀನರು, ಖಡ್ಗಹತರು; ಅವರು ಜೀವಲೋಕದಲ್ಲಿ ಭೀಕರರಾಗಿದ್ದು ಪ್ರೇತಗಳ ಜೊತೆಗೆ ಸೇರಿ ಅವಮಾನಪಟ್ಟವರಾಗಿದ್ದಾರೆ. ಸಂಹೃತರ ಮಧ್ಯದಲ್ಲೇ ಏಲಾಮಿಗೆ ಸ್ಥಳ ಏರ್ಪಾಡಾಗಿದೆ.</verse>
				<verse number="26">“ಮೆಷೆಕ್, ತೂಬಲ್ ಅವುಗಳ ಎಲ್ಲಾ ಪ್ರಜೆಯೂ ಅಲ್ಲಿರುತ್ತಾರೆ; ಆ ಪ್ರಜೆಗಳ ಗೋರಿಗಳು ಅವುಗಳನ್ನು ಸುತ್ತಿಕೊಂಡಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗಹತರು, ಜೀವಲೋಕದಲ್ಲಿ ಅವರು ಭೀಕರರಾಗಿದ್ದರಲ್ಲವೇ?</verse>
				<verse number="27">ಪೂರ್ವದಲ್ಲಿ ಯಾವ ಸುನ್ನತಿಹೀನ ಶೂರರು, ಜೀವಲೋಕದೊಳಗೆ ಬಲಿಷ್ಠರಿಗೂ ಭೀಕರರಾಗಿದ್ದು, ಹತರಾಗಿ ಆಯುಧ ಸಹಿತ ಪಾತಾಳಕ್ಕೆ ಇಳಿದು, ಕತ್ತಿಗಳನ್ನು ತಲೆದಿಂಬು ಮಾಡಿಕೊಂಡು, ತಮ್ಮ ಅಸ್ಥಿಗಳ ಮೇಲೆ ತಮ್ಮ ದುಷ್ಕೃತ್ಯಗಳ ಭಾರವನ್ನು ಹೊತ್ತುಕೊಂಡಿದ್ದರೋ ಅವರ ನಡುವೆ ಮೆಷೆಕಿನವರೂ, ತೂಬಲಿನವರೂ ನೆಲಸದೆಹೋಗುವರೇ?</verse>
				<verse number="28">“ಹೀಗೆ ಈಜಿಪ್ಟರು ಸುನ್ನತಿಹೀನರ ಮಧ್ಯೆ ನಾಶವಾಗಿ ಖಡ್ಗಹತರ ನಡುವೆ ಸೇರಿಹೋಗುವರು.</verse>
				<verse number="29">“ಎದೋಮೂ ಅದರ ಅರಸರೂ ಎಲ್ಲ ಸರದಾರರೂ ಅಲ್ಲಿದ್ದಾರೆ; ಅವರು ಹಿಂಸಾಚಾರಿಗಳಾಗಿದ್ದು, ಖಡ್ಗಹತರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ನಡುವೆ ನೆಲಸಿದ್ದಾರೆ.</verse>
				<verse number="30">“ಉತ್ತರದೇಶದ ಸಕಲ ರಾಜರುಗಳೂ ಸಮಸ್ತ ಸಿದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರರಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೆಗೊಂಡು, ಖಡ್ಗಹತರ ಮಧ್ಯೆ ಸುನ್ನತಿಹೀನರಾಗಿ ಬಿದ್ದು, ಪ್ರೇತಗಳ ನಡುವೆ ಅವಮಾನಪಟ್ಟಿದ್ದಾರೆ.</verse>
				<verse number="31">“ಫರೋಹನು ಇವರೆಲ್ಲರನ್ನೂ ನೋಡಿ ತನ್ನ ಸಮಸ್ತ ಪ್ರಜೆಯ ವಿಷಯದಲ್ಲಿ ಸಮಾಧಾನಹೊಂದುವನು; ಹೌದು, ಫರೋಹನೂ ಖಡ್ಗಹತರಾದ ಅವನ ಸಕಲ ಸೈನಿಕರೂ ಸಮಾಧಾನಹೊಂದುವರು. ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="32">“ಇಗೋ, ಜೀವಲೋಕದಲ್ಲಿ ನಾನು ನನ್ನ ಭಯವನ್ನು ಹುಟ್ಟಿಸಿದ್ದೇನೆ; ಫರೋಹನೂ ಅವನ ಸಮಸ್ತ ಪ್ರಜೆಯೂ ಸುನ್ನತಿಹೀನರ ಮಧ್ಯೆ ಖಡ್ಗಹತರ ನಡುವೆ ಸೇರಿಹೋಗುವರು,” ಎಂಬುದು ಸರ್ವೇಶ್ವರನಾದ ದೇವರ ನುಡಿ.</verse>
			</chapter>
			<chapter number="33">
				<verse number="1">ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:</verse>
				<verse number="2">“ನರಪುತ್ರನೇ, ಜನರನ್ನು ಸಂಭೋದಿಸಿ ಅವರಿಗೆ ಹೀಗೆ ನುಡಿ - “ನಾನು ದೇಶದ ಮೇಲೆ ಖಡ್ಗವನ್ನು ಬೀಳಮಾಡುವಾಗ, ಆ ದೇಶದವರು ತಮ್ಮಲ್ಲಿ ಆರಿಸಿ ನೇಮಿಸಿಕೊಂಡ ಕಾವಲುಗಾರನು</verse>
				<verse number="3">ದೇಶದ ಮೇಲೆ ಬೀಳುವ ಖಡ್ಗವನ್ನು ನೋಡಿದ ಕೂಡಲೆ ಕೊಂಬನ್ನೂದಿ ಸಜ್ಜನರನ್ನು ಎಚ್ಚರಿಸಲಿ; ಕೊಂಬಿನ ಕೂಗನ್ನು</verse>
				<verse number="4">ಕೇಳಿಯೂ ಯಾವನಾದರು ಎಚ್ಚರಗೊಳ್ಳದೆ ಬೀಳುವ ಖಡ್ಗಕ್ಕೆ ಸಿಕ್ಕಿ ನಾಶವಾದರೆ, ತನ್ನ ಮರಣಕ್ಕೆ ತಾನೇ ಕಾರಣನಾಗುತ್ತಾನೆ.</verse>
				<verse number="5">ಏಕೆಂದರೆ ಅವನು ಕೊಂಬಿನ ಕೂಗನ್ನು ಕೇಳಿಯೂ ಎಚ್ಚರಗೊಳ್ಳಲಿಲ್ಲ. ತನ್ನ ಮರಣಕ್ಕೆ ತಾನೇ ಕಾರಣನು; ಎಚ್ಚರಗೊಂಡಿದ್ದರೆ ತನ್ನ ಪ್ರಾಣವನ್ನು ಉಳಿಸಿಕೊಳ್ಳುತ್ತಿದ್ದ.</verse>
				<verse number="6">ಆದರೆ ಕಾವಲುಗಾರನೇ ಬೀಳುವ ಖಡ್ಗವನ್ನು ನೋಡಿಯೂ ಕೊಂಬನ್ನೂದದೆ, ಸಜ್ಜನರನ್ನು ಎಚ್ಚರಿಸದೆ ಹೋದರೆ ಖಡ್ಗ ಬಿದ್ದು ಆ ಜನರೊಳಗೆ ಯಾವನನ್ನೇ ಆಗಲಿ ನಾಶಮಾಡಿದರೆ, ತನ್ನ ಅಧರ್ಮದಲ್ಲೇ ನಾಶಗೊಂಡ ಆ ಮನುಷ್ಯನ ಮರಣಕ್ಕೆ, ಕಾವಲುಗಾರನೇ ಹೊಣೆ. ಅವನಿಗೆ ನಾನು ಮುಯ್ಯಿ ತೀರಿಸುವೆನು.</verse>
				<verse number="7">“ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರಿಗೆ ಕಾವಲುಗಾರನಾಗಿ ನೇಮಿಸಿದ್ದೇನೆ; ನೀನು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ದೂತನಾಗಿ ಅವರನ್ನು ಎಚ್ಚರಪಡಿಸು.</verse>
				<verse number="8">ನಾನು ದುಷ್ಟನಿಗೆ - ‘ದುಷ್ಟನೇ, ನೀನು ಸತ್ತೇಸಾಯುವೆ’ ಎಂದು ನುಡಿಯುವಾಗ ನೀನು ಆ ದುಷ್ಟನನ್ನು ತನ್ನ ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಪಡಿಸದೆಹೋದರೆ ಅವನು ತನ್ನ ಅಪರಾಧದಿಂದಲೇ ಸಾಯಬೇಕಾಗುವುದು; ಅವನ ಮರಣಕ್ಕೆ ಹೊಣೆಯಾದ ನಿನಗೆ ಮುಯ್ಯಿತೀರಿಸುವೆನು.</verse>
				<verse number="9">ಆದರೆ ನೀನು ದುಷ್ಟನನ್ನು ದುರ್ಮಾರ್ಗದಿಂದ ತಪ್ಪಿಸಲು ಅವನನ್ನು ಎಚ್ಚರಿಸಿದರೂ ಇವನು ಅದನ್ನು ಬಿಡದೆಹೋದರೆ ನಿನ್ನ ಪ್ರಾಣವನ್ನು ಉಳಿಸಿಕೊಳ್ಳುವೆ.</verse>
				<verse number="10">“ನರಪುತ್ರನೇ, ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರ ನಮ್ಮ ಮೇಲೆ ಬಿದ್ದಿವೆ; ಅವುಗಳಿಂದ ಕ್ಷೀಣವಾಗಿಹೋಗುತ್ತಿದ್ದೇವೆ; ನಾವು ಹೇಗೆ ಉಳಿದೇವು ಅಂದುಕೊಳ್ಳುತ್ತೀರಲ್ಲವೇ?</verse>
				<verse number="11">ನನ್ನ ಜೀವದಾಣೆ, ದುಷ್ಟನ ಸಾವಿನಲ್ಲಿ ನನಗೆ ಲವಲೇಶವೂ ಸಂತೋಷವಿಲ್ಲ; ಅವನು ತನ್ನ ದುರ್ಮಾರ್ಗವನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ಬಾಳುವುದೇ ನನಗೆ ಸಂತೋಷ. ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳನ್ನು ಬಿಡಿ, ಬಿಟ್ಟುಬಿಡಿ; ನೀವು ಏಕೆ ಸಾಯಬೇಕು?” ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="12">“ನರಪುತ್ರನೇ, ನಿನ್ನ ಜನರಿಗೆ ಹೀಗೆ ಹೇಳು: ಶಿಷ್ಟನು ದ್ರೋಹಮಾಡಿದ್ದಲ್ಲಿ ಅವನ ಪುಣ್ಯ ಅವನನ್ನು ಉದ್ಧರಿಸದು; ದುಷ್ಟನು ತನ್ನ ದುಷ್ಟತನವನ್ನು ಬಿಟ್ಟಲ್ಲಿ ಅವನ ಪಾಪ ಅವನನ್ನು ಬೀಳಿಸದು; ಶಿಷ್ಟನು ಪಾಪಮಾಡಿದಲ್ಲಿ ಅವನ ಪುಣ್ಯ ಅವನನ್ನು ಉಳಿಸಲಾರದು.</verse>
				<verse number="13">ನಾನು ಶಿಷ್ಟನಿಗೆ, ನೀನು ಬಾಳೇ ಬಾಳುವೆ ಎಂದು ಹೇಳಲು, ಅವನು ತನ್ನ ಪುಣ್ಯದ ಮೇಲೆ ಭರವಸೆಯಿಟ್ಟು ಪಾಪಮಾಡಿದರೆ, ಅವನು ಮಾಡಿದ ಯಾವ ಸುಕೃತ್ಯವು ಅವನ ಲೆಕ್ಕಕ್ಕೆ ಸೇರದು; ಅವನು ಮಾಡುವ ಪಾಪದಿಂದಲೇ ಅವನು ಸಾಯುವನು.</verse>
				<verse number="14">ನಾನು ದುಷ್ಟನಿಗೆ, ‘ನೀನು ಸತ್ತೇ ಸಾಯುವೆ’ ಎಂದು ಹೇಳಲು ಅವನು ತನ್ನ ಪಾಪವನ್ನು ಬಿಟ್ಟು ನ್ಯಾಯನೀತಿಗಳನ್ನು ನಡೆಸಲು</verse>
				<verse number="15">ಅಂದರೆ, ಆ ದುಷ್ಟನು ಒತ್ತೆಯನ್ನು ಬಿಗಿಹಿಡಿಯದೆ, ದೋಚಿಕೊಂಡದ್ದನ್ನು ಹಿಂದಕ್ಕೆ ಕೊಟ್ಟು, ಜೀವಾಧಾರವಾದ ವಿಧಿಗಳನ್ನು ಅನುಸರಿಸಿ, ಸಕಲ ದುಷ್ಕರ್ಮಗಳಿಗೂ ದೂರವಾದರೆ ಅವನು ಸಾಯನು, ಬಾಳೇ ಬಾಳುವನು.</verse>
				<verse number="16">ಅವನು ಮಾಡಿದ ಯಾವ ಪಾಪವೂ ಅವನ ಲೆಕ್ಕಕ್ಕೆ ಸೇರದು; ನ್ಯಾಯನೀತಿಗಳನ್ನು ನಡೆಸುತ್ತಿರುವುದರಿಂದ ಅವನು ಬಾಳೇ ಬಾಳುವನು.</verse>
				<verse number="17">“ಆದರೆ ನನ್ನ ಜನರು ಸರ್ವೇಶ್ವರನ ಕ್ರಮ ಸರಿಯಲ್ಲವೆಂದು ಹೇಳುತ್ತಿದ್ದಾರೆ. ಬದಲಿಗೆ ಅವರ ಕ್ರಮವೇ ಸರಿಯಿಲ್ಲ.</verse>
				<verse number="18">ಶಿಷ್ಟನು ತನ್ನ ಶಿಷ್ಟತನವನ್ನು ಬಿಟ್ಟು ಅಧರ್ಮಮಾಡಿದರೆ, ಆ ಅಧರ್ಮದಿಂದಲೇ ಸಾಯುವನು.</verse>
				<verse number="19">ದುಷ್ಟನು ತನ್ನ ದುಷ್ಟತನವನ್ನು ಬಿಟ್ಟು ನೀತಿನ್ಯಾಯಗಳನ್ನು ನಡೆಸಿದರೆ, ಅವುಗಳಿಂದ ಉಳಿಯುವನು.</verse>
				<verse number="20">ಆದರೆ ನೀವು ಸರ್ವೇಶ್ವರನ ಕ್ರಮವು ಸರಿಯಿಲ್ಲವೆಂದು ಹೇಳುತ್ತಿದ್ದೀರಿ; ಇಸ್ರಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುನೀಡುವೆನು.”</verse>
				<verse number="21">ನಾವು ಸೆರೆಯಾಗಿ ಹನ್ನೆರಡನೆಯ ವರ್ಷದ ಹತ್ತನೆಯ ತಿಂಗಳಿನ ಐದನೆಯ ದಿನದಲ್ಲಿ ಜೆರುಸಲೇಮಿನಿಂದ ಪಲಾಯನ ಮಾಡಿದವನೊಬ್ಬನು ನನ್ನ ಬಳಿಗೆ ಬಂದು, - ‘ಪಟ್ಟಣವು ಶತ್ರು ವಶವಾಯಿತು’ ಎಂದು ಹೇಳಿದನು.</verse>
				<verse number="22">ಅವನು ಬರುವುದಕ್ಕೆ ಹಿಂದಿನ ಸಾಯಂಕಾಲ ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾಗಿದ್ದೆ. ಆ ಪಲಾಯಿತನು ಬೆಳಿಗ್ಗೆ ಬರುವನೆಂದು ಸರ್ವೇಶ್ವರ ನನ್ನ ಬಾಯನ್ನು ಬಿಚ್ಚಿದರು; ಹೌದು ನನ್ನ ಬಾಯಿ ಬಿಚ್ಚಿತ್ತು, ನನ್ನ ಮೂಕತನ ಹೋಗಿತ್ತು.</verse>
				<verse number="23">ಆಗ ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -</verse>
				<verse number="24">“ನರಪುತ್ರನೇ, ಇಸ್ರಯೇಲ್ ನಾಡಿನ ಹಾಳುಪ್ರದೇಶಗಳಲ್ಲಿ ವಾಸಿಸುವರು, ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ನಾಡು ಅವನಿಗೆ ಸೊತ್ತಾಗಿ ಸಿಕ್ಕಿತು; ಅದು ಬಹುಜನರಾದ ನಮಗೆ ಸೊತ್ತಾಗಿ ಸಿಕ್ಕಿದ್ದು ಏನು ದೊಡ್ಡದು! ಎಂದುಕೊಳ್ಳುತ್ತಿದ್ದಾರೆ.</verse>
				<verse number="25">“ಆದುದರಿಂದ ನೀನು ಅವರಿಗೆ ಹೀಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುತ್ತೀರಿ. ವಿಗ್ರಹಗಳ ಕಡೆಗೆ ಕಣ್ಣೆತ್ತುತ್ತೀರಿ; ರಕ್ತವನ್ನು ಸುರಿಸುತ್ತೀರಿ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೇ?</verse>
				<verse number="26">ನೀವು ಕತ್ತಿ ಬಳಸುವುದರಲ್ಲೇ ನಿರತರಾಗಿದ್ದೀರಿ, ದುರಾಚಾರ ನಡೆಸುತ್ತೀರಿ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ನಿಮ್ಮಂಥವರು ದೇಶವನ್ನು ಅನುಭವಿಸಬಹುದೋ?’</verse>
				<verse number="27">“ಮತ್ತು ಅವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜೀವದಾಣೆ, ಹಾಳು ಪ್ರದೇಶಗಳಲ್ಲಿ ಇರುವವರನ್ನು ಖಡ್ಗವು ಹತಿಸುವುದು; ಬಯಲಿನಲ್ಲಿ ಇರುವವರನ್ನು ನಾನು ಮೃಗಗಳಿಗೆ ತುತ್ತು ಮಾಡುವೆನು; ಗುಹೆದುರ್ಗಗಳಲ್ಲಿ ಇರುವವರನ್ನು ವ್ಯಾಧಿಯು ಸಾಯಿಸುವುದು.</verse>
				<verse number="28">ನಾನು ದೇಶವನ್ನು ಹಾಳುಪಾಳು ಮಾಡುವೆನು, ಅದರ ಶಕ್ತಿಯ ಮದವು ಇಳಿದುಹೋಗುವುದು; ಇಸ್ರಯೇಲಿನ ಮಲೆನಾಡು ಬೀಡುಬೀಳುವುದು; ಯಾರೂ ಇಲ್ಲಿ ಹಾದುಹೋಗರು.</verse>
				<verse number="29">ಅವರು ನಡೆಸಿದ ಬಹುದುರಾಚಾರಗಳ ನಿಮಿತ್ತ ನಾನು ದೇಶವನ್ನು ಹಾಳುಪಾಳು ಮಾಡಿದಾಗ ನಾನೇ ಸರ್ವೇಶ್ವರ ಎಂದು ಅವರಿಗೆ ದೃಢವಾಗುವುದು.</verse>
				<verse number="30">“ನರಪುತ್ರನೇ, ನಿನ್ನ ಜನರು ಗೋಡೆಗಳ ನೆರಳಿನಲ್ಲೂ ಮನೆಯ ಬಾಗಿಲುಗಳಲ್ಲೂ ನಿಂತು ನಿನ್ನ ಪ್ರಸ್ತಾಪವನ್ನೆತ್ತಿ ಒಬ್ಬರಿಗೊಬ್ಬರು, ‘ಸರ್ವೇಶ್ವರನ ಬಾಯಿಂದ ಹೊರಟ ಮಾತೇನೆಂದು ಕೇಳೋಣ ಬನ್ನಿ’ ಎಂದು ಹೇಳಿಕೊಳ್ಳುತ್ತಿದ್ದಾರೆ.</verse>
				<verse number="31">ಪ್ರಶ್ನೆ ಕೇಳುವುದಕ್ಕೆ ಬರುವ ಜನರಂತೆ, ಅವರು ನಿನ್ನ ಬಳಿಗೆ ಬಂದು, ನನ್ನ ಭಕ್ತರಾಗಿ ನಿನ್ನ ಮುಂದೆ ಕೂತುಕೊಂಡು, ನಿನ್ನ ಮಾತುಗಳನ್ನು ಕೇಳುತ್ತಾರೆ; ಆದರೆ ಕೈಗೊಳ್ಳುವುದಿಲ್ಲ. ಬಾಯಿಂದ ಬಹು ಪ್ರೀತಿಯನ್ನು ತೋರಿಸುತ್ತಾರೆ; ಅವರ ಮನಸ್ಸಾದರೋ ತಾವು ದೋಚಿಕೊಂಡದ್ದರ ಮೇಲೆ ಇರುತ್ತದೆ.</verse>
				<verse number="32">ಇಗೋ, ನಿನ್ನ ಮಾತು ಅವರ ಎಣಿಕೆಯಲ್ಲಿ ಒಬ್ಬ ಸಂಗೀತಗಾರನು ವಾದ್ಯವನ್ನು ಜಾಣತನದಿಂದ ಬಾರಿಸಿ ಮಧುರಸ್ವರದಿಂದ ಹಾಡುವ ಪ್ರೇಮಗೀತೆಗೆ ಸಮಾನವಾಗಿದೆ; ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ.</verse>
				<verse number="33">ನೀನು ಮುಂತಿಳಿಸಿದ್ದು ಸಂಭವಿಸುವಾಗ ಅದು ಈಗ ಸಂಭವಿಸಲಿದೆ, ತಮ್ಮ ಮಧ್ಯೆ ಇದ್ದವನು ಪ್ರವಾದಿಯೇ ಎಂದು ಅವರಿಗೆ ನಿಶ್ಚಿತವಾಗುವುದು.”</verse>
			</chapter>
			<chapter number="34">
				<verse number="1">ಸರ್ವೇಶ್ವರಸ್ವಾಮಿ ಈ ವಾಣಿಯನ್ನು ನನಗೆ ದಯಪಾಲಿಸಿದರು.</verse>
				<verse number="2">“ನರಪುತ್ರನೇ, ಇಸ್ರಯೇಲೆಂಬ ಮಂದೆಯ ಕುರುಬರಿಗೆ ವಿರುದ್ಧ ಈ ದೈವೋಕ್ತಿಯನ್ನು ಪ್ರವಚನ ರೂಪವಾಗಿ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಯ್ಯೋ ಸ್ವಂತ ಹೊಟ್ಟೆ ಹೊರೆದುಕೊಳ್ಳುವ ಇಸ್ರಯೇಲಿನ ಕುರುಬರಿಗೆ ಧಿಕ್ಕಾರ! ಕುರಿಗಳ ಹೊಟ್ಟೆ ಗಮನಿಸುವುದು ಕುರುಬರ ಧರ್ಮವಲ್ಲವೆ?</verse>
				<verse number="3">ನೀವು ಅವುಗಳ ಹಾಲನ್ನು ಕುಡಿಯುತ್ತೀರಿ, ಉಣ್ಣೆಯ ಹೊದಿಕೆಯನ್ನು ಹೊದಿಯುತ್ತೀರಿ. ಕೊಬ್ಬಿದ ಕುರಿಗಳನ್ನು ಕಡಿಯುತ್ತೀರಿ; ಆದರೆ ಕುರಿಗಳನ್ನು ಮೇಯಿಸುವುದಿಲ್ಲ.</verse>
				<verse number="4">ಹೌದು, ದುರ್ಬಲವಾದವುಗಳನ್ನು ನೀವು ಬಲಗೊಳಿಸಲಿಲ್ಲ, ರೋಗದವುಗಳನ್ನು ಸ್ವಸ್ಥಮಾಡಲಿಲ್ಲ, ಮುರಿದ ಅಂಗಗಳನ್ನು ಕಟ್ಟಲಿಲ್ಲ, ದಾರಿತಪ್ಪಿದವುಗಳನ್ನು ಮಂದೆಗೆ ಸೇರಿಸಲಿಲ್ಲ, ತಪ್ಪಿಸಿಕೊಂಡವುಗಳನ್ನು ಹುಡುಕಲಿಲ್ಲ; ಅವುಗಳನ್ನು ಹಿಂಸೆ, ಬಲಾತ್ಕಾರಗಳಿಂದ ಆಳುತ್ತಾ ಬಂದಿದ್ದೀರಿ.</verse>
				<verse number="5">ಕುರಿಗಾಹಿಗಳು ಇರಲಿಲ್ಲವಾದುದರಿಂದ ಅವು ಚದುರಿಹೋದುವು; ದಿಕ್ಕಾಪಾಲಾಗಿ ಕಾಡಿನ ಸಕಲ ಮೃಗಗಳಿಗೆ ತುತ್ತಾದವು;</verse>
				<verse number="6">ನನ್ನ ಕುರಿಗಳು ಮಲೆನಾಡಿನಲ್ಲೆಲ್ಲಾ ಎತ್ತರವಾದ ಪ್ರತಿಯೊಂದು ಬೆಟ್ಟದ ಮೇಲೆ ಅಲೆದಾಡಿದವು; ಹೌದು, ನನ್ನ ಕುರಿಗಳು ಭೂಮಂಡಲದಲ್ಲೆಲ್ಲಾ ಚದರಿಹೋದವು; ಯಾರೂ ಅವುಗಳ ಹಿಂದೆ ಹೋಗಿ ಹುಡುಕಲಿಲ್ಲ.</verse>
				<verse number="7">“ಕುರುಬರೇ, ಸರ್ವೇಶ್ವರನ ಮಾತನ್ನು ಕೇಳಿರಿ; ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ -</verse>
				<verse number="8">ಅಯ್ಯೋ, ನನ್ನ ಕುರಿಗಳು ಕೊಳ್ಳೆಯಾದವು, ಕಾಡಿನ ಸಕಲಮೃಗಗಳಿಗೆ ತುತ್ತಾದವು; ಕುರುಬರೇ ಇರಲಿಲ್ಲ. ನನ್ನ ಕುರುಬರು ನನ್ನ ಕುರಿಗಳನ್ನು ಹುಡುಕಲಿಲ್ಲ; ಅವರು ಸ್ವಂತ ಹೊಟ್ಟೆಪಾಡನ್ನು ನೋಡಿಕೊಂಡರೇ ಹೊರತು, ನನ್ನ ಕುರಿಗಳ ಹೊಟ್ಟೆಯನ್ನು ನೋಡಲೇ ಇಲ್ಲ.</verse>
				<verse number="9">ಆದಕಾರಣ ಕುರುಬರೇ, ಸರ್ವೇಶ್ವರನ ವಾಕ್ಯವನ್ನು ಕೇಳಿರಿ;</verse>
				<verse number="10">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಅಕಟಾ! ನನ್ನ ಜೀವದಾಣೆ, ನಾನು ಆ ಕುರಿಗಾಹಿಗಳಿಗೆ ವಿರುದ್ಧನಾಗಿದ್ದೇನೆ; ಅವರು ನನ್ನ ಕುರಿಗಳ ಲೆಕ್ಕವನ್ನು ನನಗೆ ಒಪ್ಪಿಸಬೇಕು; ನನ್ನ ಕುರಿ ಮೇಯಿಸುವ ಕೆಲಸದಿಂದ ಅವರನ್ನು ತೆಗೆದುಬಿಡುವೆನು; ಆ ಕುರುಬರು ಇನ್ನು ಸ್ವಂತ ಹೊಟ್ಟೆಯನ್ನು ತುಂಬಿಸಿಕೊಳ್ಳರು; ನನ್ನ ಕುರಿಗಳು ಆಹಾರವಾಗಿ ಅವರ ಬಾಯಿಗೆ ಬೀಳದಂತೆ ಅವುಗಳನ್ನು ರಕ್ಷಿಸುವೆನು.</verse>
				<verse number="11">“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು.</verse>
				<verse number="12">ಮಂದೆಯ ಕುರುಬನು ಸುತ್ತಮುತ್ತಲು ಚದರಿಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ ನಾನು ನನ್ನ ಕುರಿಗಳನ್ನು ಹುಡುಕುವೆನು;</verse>
				<verse number="13">ಕಾರ್ಮುಗಿಲಿನ ದುರ್ದಿನದಲ್ಲಿ ಚೆಲ್ಲಾಪಿಲ್ಲಿಯಾದ ಅವುಗಳನ್ನು ಎಲ್ಲ ಸ್ಥಳಗಳಿಂದ ಬಿಡಿಸಿ, ಜನಾಂಗಗಳ ವಶದಿಂದ ತಪ್ಪಿಸಿ, ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿ ಇಸ್ರಯೇಲಿನ ಬೆಟ್ಟಗಳಲ್ಲೂ, ತೊರೆಗಳ ಬಳಿಯಲ್ಲೂ ನಾಡಿನ ಎಲ್ಲ ಹಕ್ಕೆಗಳಲ್ಲೂ ಮೇಯಿಸುವೆನು;</verse>
				<verse number="14">ಅವುಗಳಿಗೆ ಒಳ್ಳೆಯ ಮೇವನ್ನು ಮೇಯಿಸುವೆನು; ಅವುಗಳ ಹುಲ್ಲುಗಾವಲು ಇಸ್ರಯೇಲಿನ ಎತ್ತರವಾದ ಬೆಟ್ಟಗಳಲ್ಲಿರುವುದು; ಅಲ್ಲಿ ಒಳ್ಳೆಯ ತೆವರಿನಲ್ಲಿ ಮಲಗುವುವು; ಇಸ್ರಯೇಲಿನ ಬೆಟ್ಟಗಳಲ್ಲಿ ಹಸಿಹುಲ್ಲನ್ನು ಮೇಯುವುವು.</verse>
				<verse number="15">ನಾನೇ ನನ್ನ ಕುರಿಗಳನ್ನು ಮೇಯಿಸಿ ಹಾಯಾಗಿ ಮಲಗುವಂತೆ ಮಾಡುವೆನು; ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="16">“ತಪ್ಪಿಸಿಕೊಂಡಿದ್ದನ್ನು ಹುಡುಕುವೆನು, ದಾರಿತಪ್ಪಿದ್ದನ್ನು ಮಂದೆಗೆ ಸೇರಿಸುವೆನು, ದುರ್ಬಲವಾದುದನ್ನು ಬಲಗೊಳಿಸುವೆನು, ಮುರಿದ ಅಂಗವನ್ನು ಕಟ್ಟುವೆನು; ಬಲಿತ ಕೊಬ್ಬಿನ ಕುರಿಗಳನ್ನಾದರೋ ಧ್ವಂಸಮಾಡುವೆನು; ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ತಿನ್ನಿಸುವೆನು.”</verse>
				<verse number="17">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನನ್ನ ಹಿಂಡೇ, ಇಗೋ, ನಾನು ನಿಮ್ಮಲ್ಲಿನ ಕುರಿಮೇಕೆಗಳಿಗೂ ಟಗರುಹೋತಗಳಿಗೂ ಮಧ್ಯವರ್ತಿಯಾಗಿ ನ್ಯಾಯ ತೀರಿಸುವೆನು.</verse>
				<verse number="18">(ಟಗರು ಹೋತಗಳೇ,) ಒಳ್ಳೆಯ ಮೇವನ್ನು ನೀವು ಮೇದುಬಿಟ್ಟು ಮಿಕ್ಕ ಮೇವನ್ನು ತುಳಿದು, ಕಾಲಕಸ ಮಾಡಿದ್ದು ಅಲ್ಪಕಾರ್ಯವೋ? ತಿಳಿನೀರನ್ನು ಕುಡಿದುಬಿಟ್ಟು ಮಿಕ್ಕದ್ದನ್ನು ಕಾಲಿನಿಂದ ಕಲಕಿ ಬದಿಮಾಡಿದ್ದು ಸಣ್ಣ ಕೆಲಸವೋ?</verse>
				<verse number="19">ನೀವು ತುಳಿದು ಕಾಲ ಕಸಮಾಡಿದ್ದನ್ನು ನನ್ನ ಕುರಿಗಳು ಮೇಯಬೇಕಾಯಿತು. ನೀವು ಕಾಲಿನಿಂದ ಕಲಕಿ ಬದಿಮಾಡಿದ್ದನ್ನು ಅವು ಕುಡಿಯಬೇಕಾಯಿತು.</verse>
				<verse number="20">“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಗೋ, ನಾನೇ ಕೊಬ್ಬಿದ ಟಗರು ಹೋತಗಳಿಗೂ ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.</verse>
				<verse number="21">ಟಗರು ಹೋತಗಳೇ, ನೀವು ಕುರಿಮೇಕೆಗಳನ್ನು ಪಕ್ಕದಿಂದಲೂ ಹೆಗಲಿನಿಂದಲೂ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಹಿಂಡನ್ನು ಚದರಿಸಿಬಿಟ್ಟಿರಿ;</verse>
				<verse number="22">ಆದಕಾರಣ ನನ್ನ ಹಿಂಡು ಇನ್ನೆಂದಿಗೂ ಸೂರೆಯಾಗದಂತೆ ನಾನು ಅದನ್ನು ರಕ್ಷಿಸಿ ಟಗರುಹೋತಗಳಿಗೂ ಕುರಿಮೇಕೆಗಳಿಗೂ ನ್ಯಾಯತೀರಿಸುವೆನು.</verse>
				<verse number="23">“ನನ್ನ ಹಿಂಡನ್ನು ಕಾಯಲು ಒಬ್ಬನೇ ಕುರುಬನನ್ನು ಏರ್ಪಡಿಸುವೆನು; ನನ್ನ ದಾಸ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.</verse>
				<verse number="24">ಸರ್ವೇಶ್ವರನಾದ ನಾನು ನನ್ನ ಜನರ ದೇವರಾಗಿರುವೆನು; ನನ್ನ ದಾಸ ದಾವೀದನು ಅವರನ್ನಾಳುವ ಪ್ರಭುವಾಗಿರುವನು; ಸರ್ವೇಶ್ವರನಾದ ನಾನೇ ಇದನ್ನು ನುಡಿದಿದ್ದೇನೆ.</verse>
				<verse number="25">ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ನಾಡಿನಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.</verse>
				<verse number="26">ನಾನು ಅವರನ್ನೂ ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ಶುಭದಾಯಕ ವೃಷ್ಟಿ ಆಗುವುದು.</verse>
				<verse number="27">ತೋಟದ ಮರಗಳು ಹಣ್ಣುಬಿಡುವುವು; ಹೊಲಗಳು ಒಳ್ಳೆಯ ಬೆಳೆಕೊಡುವುವು; ಜನರು ಸ್ವದೇಶದಲ್ಲಿ ನೆಮ್ಮದಿಯಾಗಿರುವರು; ಅವರ ಮೇಲೆ ಹೇರಿದ ನೊಗಗಳನ್ನು ನಾನು ಮುರಿದುಹಾಕಿ, ಅವರನ್ನು ಅಡಿಯಾಳಾಗಿ ಮಾಡಿಕೊಂಡವರ ಅಧೀನದಿಂದ ಬಿಡಿಸಿದಾಗ, ನಾನೇ ಸರ್ವೇಶ್ವರ ಎಂದು ಅವರಿಗೆ ದೃಢವಾಗುವುದು.</verse>
				<verse number="28">ಅಂದಿನಿಂದ ಅವರನ್ನು ಅನ್ಯಜನರು ಸೂರೆಮಾಡರು, ಕಾಡುಮೃಗಗಳು ನುಂಗವು; ಅವರು ಯಾರಿಗೂ ಹೆದರದೆ ನೆಮ್ಮದಿಯಾಗಿ ವಾಸಿಸುವರು.</verse>
				<verse number="29">ನಾನು ಅವರಿಗಾಗಿ ಪ್ರಸಿದ್ಧ ಫಲವೃಕ್ಷಗಳನ್ನು ಬೆಳೆಯಿಸುವೆನು, ಕ್ಷಾಮವು ಅವರ ನಾಡನ್ನು ಇನ್ನು ಹಾಳುಮಾಡದು. ಅವರು ಅನ್ಯಜನರ ತಿರಸ್ಕಾರಕ್ಕೆ ಗುರಿಯಾಗರು.</verse>
				<verse number="30">ಆಗ ಅವರು ತಮ್ಮ ದೇವರಾದ ಸರ್ವೇಶ್ವರನೆಂಬ ನಾನು ತಮ್ಮೊಂದಿಗಿದ್ದೇನೆಂದೂ ಇಸ್ರಯೇಲ್ ವಂಶದವರಾದ ತಾವು ನನ್ನ ಜನರಾಗಿದ್ದೇವೆಂದೂ ನಿಶ್ಚಯಿಸಿಕೊಳ್ಳುವರು; ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="31">ನೀವು ನನ್ನ ಕುರಿಗಳು, ನನ್ನ ಕಾವಲಿನ ಕುರಿಗಳು, ನರಕುರಿಗಳಾದ ನಿಮಗೆ ನಾನು ದೇವರು,” ಎಂದು ಸರ್ವೇಶ್ವರನಾದ ದೇವರು ಹೇಳುತ್ತಾರೆ.</verse>
			</chapter>
			<chapter number="35">
				<verse number="1">ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -</verse>
				<verse number="2">“ನರಪುತ್ರನೇ, ನೀನು ಸೇಯೀರ ಬೆಟ್ಟದ ಸೀಮೆಗೆ ಅಭಿಮುಖನಾಗಿ ಅದಕ್ಕೆ ಈ ದೈವೋಕ್ತಿಯನ್ನು ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: -</verse>
				<verse number="3">	ಎದೋಮೇ ಇಗೋ, ನಿನಗೆ ನಾ ವಿರೋಧಿಯಾಗಿರುವೆ ನಿನ್ನ ನಾಡಿನ ಮೇಲೆ ಕೈಯೆತ್ತಿ ನಾಶಪಡಿಸುವೆ.</verse>
				<verse number="4">ನಿನ್ನ ಪಟ್ಟಣಗಳು ಹಾಳಾಗುವುವು; ನೀ ಕಾಡಾಗುವೆ. ಆಗ ನಾನೇ ಸರ್ವೇಶ್ವರನೆಂದು ನೀನು ತಿಳಿದುಕೊಳ್ಳುವೆ.</verse>
				<verse number="5">“ನೀನು ಇಸ್ರಯೇಲಿನ ಮೇಲೆ ದೀರ್ಘ ದ್ವೇಷವಿಟ್ಟು, ಅವರ ಅಪರಾಧದ ಕಡೆಗಾಲದಲ್ಲಿ ಆಪತ್ತು ಸಂಭವಿಸಿದಾಗ, ಅವರನ್ನು ಕತ್ತಿಯ ಬಾಯಿಗೆ ಗುರಿಮಾಡಿದ್ದೆ.</verse>
				<verse number="6">ಆದುದರಿಂದ ನನ್ನ ಜೀವದಾಣೆ, ನಾನು ನಿನ್ನನ್ನು ರಕ್ತಮಯಮಾಡುವೆನು. ರಕ್ತದ ಕೋಡಿ ನಿನ್ನನ್ನು ಹಿಂದಟ್ಟುವುದು; ನೀನು ರಕ್ತ ಸುರಿಸುವುದಕ್ಕೆ ಹೇಸದೆ ಹೋದ ಕಾರಣ, ರಕ್ತಪ್ರವಾಹವೇ ನಿನ್ನ ಬೆನ್ನಹತ್ತುವುದು; ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="7">ಸೆಯೀರ್ ಬೆಟ್ಟವೇ, ನಾನು ನಿನ್ನ ಸೀಮೆಯನ್ನು ಹಾಳುಪಾಳು ಮಾಡಿ ಅದರೊಳಗೆ ಹೋಗುವವರನ್ನೂ ಬರುವವರನ್ನೂ ಕತ್ತರಿಸಿಬಿಟ್ಟು,</verse>
				<verse number="8">ನಿನ್ನ ಪರ್ವತಗಳನ್ನು ನಿನ್ನವರ ಶವಗಳಿಂದ ತುಂಬಿಸುವೆನು; ಖಡ್ಗಹತರು ನಿನ್ನ ಗುಡ್ಡತಗ್ಗು ತೊರೆಗಳಲ್ಲಿ ಬಿದ್ದುಹೋಗುವರು.</verse>
				<verse number="9">ನಾನು ನಿನ್ನನ್ನು ನಿತ್ಯನಾಶನಕ್ಕೆ ಈಡುಮಾಡುವೆನು; ನಿನ್ನ ಪಟ್ಟಣಗಳು ನಿರ್ಜನವಾಗುವುವು; ಆಗ ನಾನೇ ಸರ್ವೇಶ್ವರ ಎಂದು ನಿನ್ನವರಿಗೆ ನಿಶ್ಚಿತವಾಗುವುದು.</verse>
				<verse number="10">“ನೀನು ‘ಇವೆರಡು ಜನಾಂಗಗಳೂ ಇವೆರಡು ದೇಶಗಳೂ ನನ್ನ ವಶವಾಗುವುವು, ನಾವು ಅವುಗಳನ್ನು ಅನುಭವಿಸುವೆವು’ ಎಂದುಕೊಂಡು ಅಲ್ಲಿನ ನನ್ನ ಸಾನ್ನಿಧ್ಯವನ್ನು ಅಲಕ್ಷ್ಯಮಾಡಿದ್ದೆ.</verse>
				<verse number="11">ಆದುದರಿಂದ ನನ್ನ ಜೀವದಾಣೆ, ನೀನು ನನ್ನ ಜನರನ್ನು ದ್ವೇಷಿಸಿ, ಅವರ ಮೇಲಿಟ್ಟ ಕೋಪಕ್ಕೂ ಮಾತ್ಸರ್ಯಕ್ಕೂ ನಾನು ನಿನಗೆ ಪ್ರತೀಕಾರಮಾಡುವೆನು; ನಿನ್ನನ್ನು ದಂಡಿಸುವಾಗ ನಾನು ಅವರಿಗೆ ಗೋಚರವಾಗುವೆನು. ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="12">ನೀನು ಇಸ್ರಯೇಲಿನ ಪರ್ವತಗಳನ್ನು ನೋಡಿ, - ‘ಆಹಾ, ಹಾಳಾದವು, ನಮಗೆ ತಿನ್ನುವ ತುತ್ತಾಗಿವೆ,’ ಎಂದು ಮಾಡಿದ ದೂಷಣೆಗಳು ಸರ್ವೇಶ್ವರನಾದ ನನ್ನ ಕಿವಿಗೆ ಬಿದ್ದಿವೆ ಎಂಬುದು ನಿನಗೆ ಗೊತ್ತಾಗುವುದು.</verse>
				<verse number="13">ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಅತಿಯಾದ ಹರಟೆಗಳನ್ನು ಕೇಳಿದ್ದೇನೆ.”</verse>
				<verse number="14">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ನಿನ್ನನ್ನು ಹಾಳುಮಾಡಿ ಜಗವನ್ನೆಲ್ಲಾ ಸಂತೋಷಪಡಿಸುವೆನು.</verse>
				<verse number="15">ಇಸ್ರಯೇಲರ ಸೊತ್ತಿನ ನಾಶನಕ್ಕೆ ಜಗವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೆಯೀರ್ ಬೆಟ್ಟವೇ, ನೀನು ಹಾಳಾಗುವೆ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವುದು; ಆಗ ನಾನೇ ಸರ್ವೇಶ್ವರ ಎಂದು ವ್ಯಕ್ತವಾಗುವುದು.”</verse>
			</chapter>
			<chapter number="36">
				<verse number="1">“ನರಪುತ್ರನೇ, ನೀನು ಇಸ್ರಯೇಲಿನ ಪರ್ವತಗಳಿಗೆ ಈ ದೈವೋಕ್ತಿಯನ್ನು ನುಡಿ: ಇಸ್ರಯೇಲಿನ ಪರ್ವತಗಳೇ, ಸರ್ವೇಶ್ವರನ ಈ ವಾಕ್ಯವನ್ನು ಕೇಳಿರಿ:</verse>
				<verse number="2">ಶತ್ರು ನಿಮ್ಮನ್ನು ನೋಡಿ, ‘ಆಹಾ ಈ ಪುರಾತನ ದುರ್ಗಗಳು ನಮ್ಮ ವಶವಾಗಿವೆ’ ಎಂದು ಹಿಗ್ಗಿಕೊಂಡದ್ದರಿಂದ ಈ ದೈವೋಕ್ತಿಯನ್ನು ನುಡಿಯಬೇಕೆಂದು ಸರ್ವೇಶ್ವರನಾದ ದೇವರ ಅಪ್ಪಣೆಯಾಯಿತು.”</verse>
				<verse number="3">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಅಯ್ಯೋ, ಎಲ್ಲಾ ಕಡೆಯೂ ತುಳಿಯಲ್ಪಟ್ಟು, ಹಾಳಾದ ನೀವು, ಜನಾಂಗಗಳಲ್ಲಿ ಉಳಿದವರ ವಶವಾಗಿದ್ದು ಹರಟೆಕೊಚ್ಚುವವರ ಬಾಯಿಗೆ ಬಿದ್ದು, ಜನರ ದೂಷಣೆಗೆ ಗುರಿಯಾಗಿದ್ದೀರಿ.</verse>
				<verse number="4">ಆದಕಾರಣ ಇಸ್ರಯೇಲಿನ ಪರ್ವತಗಳೇ, ಸರ್ವೇಶ್ವರನಾದ ದೇವರ ಈ ವಾಕ್ಯವನ್ನು ಕೇಳಿರಿ - ಬೆಟ್ಟಗುಡ್ಡಗಳಿಗೆ ತೊರೆತಗ್ಗುಗಳಿಗೆ, ಕಾಡಾದ ಹಾಳು ಪ್ರದೇಶಗಳಿಗೆ, ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೆ ಸರ್ವೇಶ್ವರನಾದ ದೇವರು ಹೀಗೆ ನುಡಿಯುತ್ತಾರೆ:</verse>
				<verse number="5">“ಆಹಾ, ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡು, ಪೂರ್ಣಹೃದಯದಿಂದ ಆನಂದಪಟ್ಟವರು ಹಾಗು ಅದನ್ನು ಮನಃಪೂರ್ವಕವಾಗಿ ತಿರಸ್ಕರಿಸಿ ಸೂರೆಗೆ ತಳ್ಳಿಬಿಟ್ಟವರು ಆದ ಎದೋಮಿನವರೆಲ್ಲರನ್ನು ಮತ್ತು ಇತರ ಜನಾಂಗಗಳಲ್ಲಿ ಉಳಿದವರನ್ನು ನಾನು ರೋಷಾವೇಶದಿಂದ ಶಪಿಸಿಯೇ ಶಪಿಸಿದ್ದೇನೆ.</verse>
				<verse number="6">“ಹೀಗಿರಲು ಇಸ್ರಯೇಲ್ ನಾಡಿನ ವಿಷಯವಾದ ಈ ದೈವೋಕ್ತಿಯನ್ನು ಅದರ ಬೆಟ್ಟಗುಡ್ಡ, ತೊರೆ-ತಗ್ಗುಗಳಿಗೆ ನುಡಿಯಬೇಕೆಂದು ಅಪ್ಪಣೆಯಾಗಿದೆ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಆಹಾ, ನಾನು ಕೋಪೋದ್ರೇಕದಿಂದ ರೋಷಾವೇಷದಿಂದ ಮಾತನಾಡಿದ್ದೇನೆ. ನೀವು ಅನ್ಯಜನಾಂಗಗಳಿಂದ ಅವಮಾನವನ್ನು ಅನುಭವಿಸಿದ್ದೀರಿ.</verse>
				<verse number="7">ಆದಕಾರಣ ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಿಮ್ಮ ಸುತ್ತಣ ಆ ಅನ್ಯ ಜನಾಂಗಗಳೇ ತಮ್ಮ ಮೇಲೆ ಬಿದ್ದ ಅವಮಾನವನ್ನು ಅನುಭವಿಸುವುದು ಖಂಡಿತ ಎಂದು ಕೈಯೆತ್ತಿ ಪ್ರಮಾಣಮಾಡಿದ್ದೇನೆ.</verse>
				<verse number="8">ಇಸ್ರಯೇಲಿನ ಪರ್ವತಗಳೇ, ನಿಮ್ಮ ಗಿಡಗಳು ರೆಂಬೆಗಳನ್ನು ಹರಡಿಕೊಂಡು ನನ್ನ ಜನರಾದ ಇಸ್ರಯೇಲರಿಗೆ ಫಲಕೊಡುವುವು; ಅವರ ಬರುವಿಕೆ ಸಮೀಪವಾಯಿತು.</verse>
				<verse number="9">ಇಗೋ, ನಾನು ನಿಮ್ಮ ಪಕ್ಷದವನು; ನಿಮ್ಮ ಕಡೆಗೆ ತಿರುಗಿಕೊಳ್ಳುವೆನು.</verse>
				<verse number="10">ನಿಮ್ಮ ಹೊಲಗಳನ್ನು ಉಳುಮೆಮಾಡಿ ಬಿತ್ತುವರು; ನಿಮ್ಮಲ್ಲಿ ಬಹುಜನರು ಅಂದರೆ, ಇಸ್ರಯೇಲ್ ವಂಶವೆಲ್ಲವೂ ವಾಸಿಸುವಂತೆಮಾಡುವೆನು; ಪಟ್ಟಣಗಳು ಜನಭರಿತವಾಗುವುವು, ಹಾಳುನಿವೇಶನಗಳಲ್ಲಿ ಕಟ್ಟಡಗಳು, ಏಳುವುವು;</verse>
				<verse number="11">ನಿಮ್ಮಲ್ಲಿ ಬಹುಜನರನ್ನೂ ಪಶುಗಳನ್ನೂ ವೃದ್ಧಿಗೊಳಿಸುವೆನು; ಅವು ಹೆಚ್ಚಿ ಫಲಭರಿತವಾಗುವುವು. ಮೊದಲಿನಂತೆ ನಿಮ್ಮಲ್ಲಿ ನಿವಾಸಿಗಳನ್ನು ತುಂಬಿಸಿ, ಮೊದಲಿಗಿಂತ ನಿಮ್ಮನ್ನು ಉತ್ತಮಸ್ಥಿತಿಗೆ ತರುವೆನು; ನಾನೇ ಸರ್ವೇಶ್ವರ ಎಂದು ನಿಮಗೆ ದೃಢವಾಗುವುದು.</verse>
				<verse number="12">ಬೆಟ್ಟದ ಸೀಮೆಯೇ, ನಾನು ನಿನ್ನಲ್ಲಿ ಜನಸಂಚಾರವನ್ನು ಉಂಟುಮಾಡುವೆನು; ನನ್ನ ಜನರಾದ ಇಸ್ರಯೇಲರೇ, ನಿನ್ನಲ್ಲಿ ಸಂಚರಿಸುತ್ತಾ, ನಿನ್ನನ್ನು ಸೊತ್ತಾಗಿ ಅನುಭವಿಸುವರು; ನೀನು ಇನ್ನು ಅವರಿಗೆ ಪುತ್ರಶೋಕವನ್ನು ಕೊಡದಿರುವೆ.”</verse>
				<verse number="13">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ ‘ನೀನು ನರಭಕ್ಷಕನಾಗಿ ನಿನ್ನ ಪ್ರಜೆಗೆ ಪುತ್ರಶೋಕವನ್ನು ಕೊಟ್ಟಿರುವೆ’ ಎಂದು ನಿನ್ನನ್ನು ಬಯ್ಯುತ್ತಾರಲ್ಲವೆ?</verse>
				<verse number="14">ಇನ್ನು ಮುಂದೆ ನೀನು ನರಭಕ್ಷಕನಾಗುವುದಿಲ್ಲ; ನಿನ್ನ ಪ್ರಜೆಗೆ ಇನ್ನು ಪುತ್ರಶೋಕವನ್ನು ಕೊಡದಿರುವೆ;</verse>
				<verse number="15">ಮ್ಲೇಚ್ಛರ ಧಿಕ್ಕಾರವನ್ನು ಇನ್ನು ನಿನ್ನ ಕಿವಿಗೆ ಬೀಳಿಸೆನು; ನೀನು ಜನಾಂಗಗಳಿಂದ ಇನ್ನು ಅವಮಾನವನ್ನು ಅನುಭವಿಸದಿರುವೆ; ನಿನ್ನ ಪ್ರಜೆ ಮುಗ್ಗರಿಸುವುದಕ್ಕೆ ಇನ್ನು ನೀನು ಕಾರಣನಾಗುವುದಿಲ್ಲ” ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="16">ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು -</verse>
				<verse number="17">“ನರಪುತ್ರನೇ, ಇಸ್ರಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ ದುರಾಚಾರಗಳಿಂದ ಅದನ್ನು ಅಶುದ್ಧಗೊಳಿಸಿದರು. ಅವರ ನಡತೆ ಮುಟ್ಟಿನ ಹೊಲಸಿನಂತೆ ನನಗೆ ಅಸಹ್ಯವಾಗಿತ್ತು.</verse>
				<verse number="18">ಅವರು ನಾಡಿನ ಮೇಲೆ ರಕ್ತವನ್ನು ಸುರಿಸಿ, ತಮ್ಮ ವಿಗ್ರಹಗಳಿಂದ ಅದನ್ನು ಹೊಲೆಗೈದಕಾರಣ ನಾನು ಅವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸುವೆನು;</verse>
				<verse number="19">ಜನಾಂಗಗಳೊಳಗೆ ಅವರನ್ನು ಚದರಿಸುವೆನು; ದೇಶಗಳಿಗೆ ತೂರಿಬಿಟ್ಟು, ಅವರ ದುರ್ಮಾರ್ಗ ದುರಾಚಾರಗಳಿಗೆ ಸರಿಯಾಗಿ ದಂಡಿಸಿದೆನು.</verse>
				<verse number="20">ಅವರು ಆ ಜನಾಂಗಗಳೊಳಗೆ ಸೇರಿಕೊಂಡ ಮೇಲೆ, ‘ಓಹೋ, ಇವರು ಸರ್ವೇಶ್ವರನ ಪ್ರಜೆಗಳು, ಆತನ ದೇಶದಿಂದ ಭ್ರಷ್ಟರಾಗಿ ಬಂದಿದ್ದಾರೆ’ ಎಂದೆನಿಸಿಕೊಂಡರು. ನನ್ನ ಪರಿಶುದ್ಧನಾಮಕ್ಕೆ ಅಪಕೀರ್ತಿಯನ್ನು ತಂದರು.</verse>
				<verse number="21">ಇಸ್ರಯೇಲ್ ವಂಶದವರು ಜನಾಂಗಗಳೊಳಗೆ ಸೇರಿ, ಅಲ್ಲಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮವನ್ನು ಕುರಿತು, ನಾನು ಮರುಗಿದೆನು.</verse>
				<verse number="22">“ಆದಕಾರಣ - ನೀನು ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಸ್ರಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮದ ನಿಮಿತ್ತವೆ, ಈ ರಕ್ಷಣಾಕಾರ್ಯವನ್ನು ಮಾಡುತ್ತೇನೆ.</verse>
				<verse number="23">ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಶ್ರೀನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು. ಹೀಗೆ ನಾನು ಅವುಗಳ ಕಣ್ಣೆದುರಿಗೆ, ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಗ ನಾನೇ ಸರ್ವೇಶ್ವರ ಎಂದು ಅವುಗಳಿಗೆ ನಿಶ್ಚಿತವಾಗುವುದು. ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="24">ನಾನು ನಿಮ್ಮನ್ನು ಜನಾಂಗಗಳಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡುವೆನು.</verse>
				<verse number="25">ನಾನು ನಿಮ್ಮ ಮೇಲೆ ನಿರ್ಮಲೋದಕವನ್ನು ಪ್ರೋಕ್ಷಿಸುವೆನು, ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.</verse>
				<verse number="26">ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನನ್ನ ಸ್ವಭಾವವನ್ನು ಹುಟ್ಟಿಸುವೆನು. ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.</verse>
				<verse number="27">ನನ್ನ ಆತ್ಮವನ್ನು ನಿಮ್ಮಲ್ಲಿ ನೆಲೆಸಿರುವಂತೆ ಅನುಗ್ರಹಿಸಿ, ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಗೊಂಡು ಆಚರಿಸುವಿರಿ.</verse>
				<verse number="28">ನಾನು ನಿಮ್ಮ ಪಿತೃಗಳಿಗೆ ಅನುಗ್ರಹಿಸಿದ ನಾಡಿನಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.</verse>
				<verse number="29">ನಾನು ನಿಮ್ಮನ್ನು ನಿಮ್ಮ ಎಲ್ಲ ಅಶುದ್ಧತೆಯಿಂದ ಉದ್ಧರಿಸಿ, ಕಾಳನ್ನು ಬೆಳೆಯಲೆಂದು ಅಪ್ಪಣೆಕೊಟ್ಟು ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡೆನು.</verse>
				<verse number="30">ನೀವು ಕ್ಷಾಮದೇಶದವರೆಂದು ಜನಾಂಗಗಳು ಇನ್ನು ನಿಮ್ಮನ್ನು ನಿಂದಿಸದಂತೆ ನಾನು ಮರದ ಹಣ್ಣನ್ನೂ ಹೊಲದ ಬೆಳೆಯನ್ನೂ ಹೆಚ್ಚಿಸುವೆನು.</verse>
				<verse number="31">ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ, ನಿಮಗೆ ನೀವೇ ಹೇಸಿಕೊಳ್ಳುವಿರಿ.”</verse>
				<verse number="32">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಈ ರಕ್ಷಣಾಕಾರ್ಯವನ್ನು ಮಾಡುವುದು ನಿಮ್ಮ ನಿಮಿತ್ತವಲ್ಲವೆಂಬುದು ನಿಮಗೆ ತಿಳಿದಿರಲಿ; ಇಸ್ರಯೇಲ್ ವಂಶದವರೇ, ನಿಮ್ಮ ದುರ್ಮಾರ್ಗಗಳಿಗಾಗಿ ಲಜ್ಜೆಗೊಳ್ಳಿರಿ, ನಾಚಿಕೆಪಡಿರಿ.</verse>
				<verse number="33">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ನಿಮ್ಮನ್ನು ನಿಮ್ಮ ಅಪರಾಧಗಳಿಂದೆಲ್ಲಾ ಶುದ್ಧಿಮಾಡುವ ದಿನದಲ್ಲಿ ಪಟ್ಟಣಗಳನ್ನು ನಿವಾಸಿಗಳಿಂದ ತುಂಬಿಸುವೆನು. ನಿವೇಶನಗಳಲ್ಲಿ ಕಟ್ಟಡಗಳು ಏಳುವುವು.</verse>
				<verse number="34">ಹೌದು, ಹೋಗುವವರೆಲ್ಲರ ಕಣ್ಣೆದುರಿಗೆ ಬೀಡುಬಿದ್ದು ಕಾಡಾದ ಭೂಮಿಯನ್ನು ಕೃಷಿಮಾಡುವರು.</verse>
				<verse number="35">ಆಗ ಜನರು, ‘ಕಾಡಾಗಿದ್ದ ಈ ನಾಡು ಏದೆನ ಉದ್ಯಾನದಂತೆ ಕಂಗೊಳಿಸುತ್ತದೆ; ಬಿದ್ದುಹೋಗಿ ಹಾಳುಪಾಳಾದ ಪಟ್ಟಣಗಳು ಕೋಟೆಕೊತ್ತಲಗಳಿಂದ ಕೂಡಿ ಜನಭರಿತವಾಗಿವೆಯಲ್ಲಾ!’ ಎಂದು ಹೇಳುವರು.</verse>
				<verse number="36">ಸರ್ವೇಶ್ವರನಾದ ನಾನೇ ಬಿದ್ದುಹೋದುದನ್ನು ಕಟ್ಟಿ, ಹಾಳಾದುದನ್ನು ಬೆಳೆಯಿಸಿದ್ದೇನೆಂಬುದು ನಿಮ್ಮ ಸುತ್ತಲು ಉಳಿದ ಜನಾಂಗಗಳಿಗೆ ಗೊತ್ತಾಗುವುದು. ಸರ್ವೇಶ್ವರನಾದ ನಾನೇ ನುಡಿದಿದ್ದೇನೆ, ಹಾಗೆಯೇ ನಡೆಸುತ್ತೇನೆ.”</verse>
				<verse number="37">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಇನ್ನೊಂದು ವಿಷಯದಲ್ಲಿ ಇಸ್ರಯೇಲ್ ವಂಶದವರ ವಿಜ್ಞಾಪನೆಯನ್ನು ಆಲಿಸಿ ನೆರವೇರಿಸುವೆನು. ಅದೇನೆಂದರೆ, ಅವರ ಜನಸಂಖ್ಯೆಯನ್ನು ಹಿಂಡಿನಂತೆ ಹೆಚ್ಚಿಸುವೆನು.</verse>
				<verse number="38">ಮೀಸಲಾದ ಮಂದೆಯಂತೆ, ಹಬ್ಬಗಳಲ್ಲಿ ಜೆರುಸಲೇಮಿಗೆ ಬಂದು ಸೇರುವ ಹಿಂಡಿನ ಹಾಗೆ, ಜನರು ಹಾಳುಪಟ್ಟಣಗಳಲ್ಲಿ ಹಿಂಡುಹಿಂಡಾಗಿ ತುಂಬಿಕೊಳ್ಳುವರು. ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ನಿಶ್ಚಯವಾಗುವುದು.”</verse>
			</chapter>
			<chapter number="37">
				<verse number="1">ನಾನು ಸರ್ವೇಶ್ವರನ ಹಸ್ತಸ್ಪರ್ಶದಿಂದ ಪರವಶನಾಗಿದ್ದೆ. ಆಗ ಅವರು ತಮ್ಮ ಆತ್ಮದ ಮೂಲಕ ನನ್ನನ್ನು ಒಯ್ದು, ಎಲುಬುಗಳಿಂದ ತುಂಬಿದ್ದ ಒಂದು ಕಣಿವೆಯಲ್ಲಿ ಇಳಿಸಿದರು.</verse>
				<verse number="2">ನಾನು ಎಲುಬುಗಳ ಮಧ್ಯೆ ಆ ಕಣಿವೆಯನ್ನು ಬಳಸಿಕೊಂಡು ಬರುವಂತೆ ಮಾಡಿದರು. ಇಗೋ, ಕಣಿವೆಯ ಮೇಲೆಲ್ಲಾ ಬಹಳವಾಗಿ ಒಣಗಿದ ಎಲುಬುಗಳು ಲೆಕ್ಕವಿಲ್ಲದಷ್ಟು ಬಿದ್ದಿದ್ದವು.</verse>
				<verse number="3">ಸರ್ವೇಶ್ವರ ನನ್ನನ್ನು - “ನರಪುತ್ರನೇ, ಈ ಎಲುಬುಗಳಿಗೆ ಜೀವ ಬರಬಹುದೇ?” ಎಂದು ಕೇಳಿದರು. ನಾನು “ಸರ್ವೇಶ್ವರರಾದ ದೇವರೇ, ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ.</verse>
				<verse number="4">ಆಗ ಅವರು ನನಗೆ ಹೀಗೆ ಅಪ್ಪಣೆಮಾಡಿದರು: “ನೀನು ಆ ಎಲುಬುಗಳಿಗೇ ಪ್ರವಾದಿಸಿ ಅವಕ್ಕೆ ಈ ದೈವೋಕ್ತಿಯನ್ನು ನುಡಿ: ಒಣ ಎಲುಬುಗಳೇ, ಸರ್ವೇಶ್ವರನ ವಾಣಿಯನ್ನು ಕೇಳಿ:</verse>
				<verse number="5">ಸರ್ವೇಶ್ವರನಾದ ದೇವರು ನಿಮಗೆ ಹೀಗೆ ಹೇಳುತ್ತಾರೆ - ಇಗೋ, ನಾನು ನಿಮ್ಮೊಳಗೆ ಶ್ವಾಸವನ್ನು ಊದುವೆನು; ನೀವು ಬದುಕುವಿರಿ.</verse>
				<verse number="6">ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ, ಮಾಂಸವನ್ನು ಹರಡಿ, ಚರ್ಮವನ್ನು ಹೊದಿಸಿ, ನಿಮ್ಮಲ್ಲಿ ಶ್ವಾಸವನ್ನು ತುಂಬುವೆನು; ಆಗ ನೀವು ಬದುಕಿ ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಿರಿ.”</verse>
				<verse number="7">ನನಗೆ ಅಪ್ಪಣೆಯಾದಂತೆ ನಾನು ಈ ದೈವೋಕ್ತಿಯನ್ನು ನುಡಿದೆ. ನಾನು ಮಾತಾಡುತ್ತಿರುವಾಗ ಒಂದು ಶಬ್ದ ಕೇಳಿಸಿತು. ಇಗೋ, ಟಕಟಕ ಎನ್ನುತ್ತಾ ಎಲುಬು ಎಲುಬಿಗೆ, ಜೋಡನೆಯಾದವು.</verse>
				<verse number="8">ನಾನು ನೋಡುತ್ತಿರಲು ಏನಾಶ್ಚರ್ಯ! ಅವುಗಳ ಮೇಲೆ ನರಗಳು ಹಬ್ಬಿಕೊಂಡವು, ಮಾಂಸವು ಹರಡಿಕೊಂಡಿತು, ಚರ್ಮವು ಮೇಲುಹೊದಿಕೆಯಾಯಿತು; ಶ್ವಾಸ ಮಾತ್ರ ಇರಲಿಲ್ಲ.</verse>
				<verse number="9">ಆಗ ಸರ್ವೇಶ್ವರ ನನಗೆ - “ನರಪುತ್ರನೇ, ನೀನು ಶ್ವಾಸಕ್ಕೆ ನುಡಿ; ಶ್ವಾಸವೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚತುರ್ದಿಕ್ಕುಗಳಿಂದ ಬೀಸಿ ಹತ ಶರೀರಗಳು ಬದುಕುವಂತೆ ಅವುಗಳ ಮೇಲೆ ಸುಳಿ, ಎಂಬುದಾಗಿ ಶ್ವಾಸಕ್ಕೆ ನುಡಿ,” ಎಂದು ಅಪ್ಪಣೆಕೊಟ್ಟರು.</verse>
				<verse number="10">ನಾನು ಅವರ ಅಪ್ಪಣೆಯಂತೆ ನುಡಿದೆ. ಇಗೋ, ಶ್ವಾಸವು ಅವುಗಳಲ್ಲಿ ಹೊಕ್ಕಿತು. ಅವು ಬದುಕಿದವು, ಕಾಲೂರಿ ನಿಂತವು, ಅತ್ಯಂತ ದೊಡ್ಡ ಸೈನ್ಯವಾದವು.</verse>
				<verse number="11">ಆಮೇಲೆ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಈ ಎಲುಬುಗಳೇ ಇಸ್ರಯೇಲಿನ ಪೂರ್ಣವಂಶ; ಇಗೋ, ಆ ವಂಶೀಯರು, ‘ಅಯ್ಯೋ, ನಮ್ಮ ಎಲುಬುಗಳು ಒಣಗಿಹೋದವು, ನಮ್ಮ ನಿರೀಕ್ಷೆ ಹಾಳಾಯಿತು; ನಾವು ಬುಡನಾಶವಾದೆವು,’ ಎಂದುಕೊಳ್ಳುತ್ತಿದ್ದಾರೆ.</verse>
				<verse number="12">ಆದಕಾರಣ ನೀನು ಈ ದೈವೋಕ್ತಿಯನ್ನು ಅವರಿಗೆ ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನನ್ನ ಜನರೇ, ನೋಡಿ: ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿ, ಇಸ್ರಯೇಲ್ ನಾಡಿಗೆ ಸೇರಮಾಡುವೆನು.</verse>
				<verse number="13">ನನ್ನ ಜನರೇ, ನಾನು ನಿಮ್ಮ ಗೋರಿಗಳನ್ನು ತೆರೆದು, ಅವುಗಳೊಳಗಿಂದ ನಿಮ್ಮನ್ನು ಎಬ್ಬಿಸಿದಾಗ, ನಾನೇ ಸರ್ವೇಶ್ವರ ಎಂದು ನಿಮಗೆ ದೃಢವಾಗುವುದು.</verse>
				<verse number="14">ನಾನು ನನ್ನ ಶ್ವಾಸವನ್ನು ನಿಮ್ಮಲ್ಲಿ ಊದಿ, ನಿಮ್ಮನ್ನು ಬದುಕಿಸಿ, ನಿಮ್ಮ ದೇಶದಲ್ಲಿ ನೆಲೆಗೊಳಿಸುವೆನು. ಆಗ ಸರ್ವೇಶ್ವರನಾದ ನಾನೇ ಇದನ್ನು ನುಡಿದು ನಡೆಸಿದ್ದೇನೆ ಎಂದು ತಿಳಿದುಕೊಳ್ಳುವಿರಿ; ಇದು ಸರ್ವೇಶ್ವರನ ಸಂಕಲ್ಪ’.”</verse>
				<verse number="15">ಸರ್ವೇಶ್ವರ ಇನ್ನೊಂದು ವಾಣಿಯನ್ನು ನನಗೆ ದಯಪಾಲಿಸಿದರು.</verse>
				<verse number="16">“ನರಪುತ್ರನೇ, ನೀನು ಒಂದು ದಂಡವನ್ನು ತೆಗೆದು ಅದರಲ್ಲಿ ‘ಜುದೇಯದ್ದು, ಜುದೇಯಕ್ಕೆ ಸೇರಿದ ಇಸ್ರಯೇಲರದು’ ಎಂದು ಬರೆ; ಇನ್ನೊಂದು ದಂಡವನ್ನು ತೆಗೆದು ಅದರಲ್ಲಿ, ‘ಜೋಸೆಫನದು, ಎಫ್ರಯಿಮಿನದು, ಜೊಸೇಫಿಗೆ ಸೇರಿದ ಎಲ್ಲ ಇಸ್ರಯೇಲರದು’ ಎಂದು ಬರೆ;</verse>
				<verse number="17">ಆಮೇಲೆ ಅವು ನಿನ್ನ ಕೈಯಲ್ಲಿ ಒಂದಾಗುವಂತೆ ಅವೆರಡನ್ನೂ ಒಂದಕ್ಕೊಂದು ಉದ್ದವಾಗಿ ಸೇರಿಸಿ ಹಿಡಿ.</verse>
				<verse number="18">ನಿನ್ನ ಜನರು, “ಇದೇನು? ನಮಗೆ ತಿಳಿಸುವುದಿಲ್ಲವೆ?” ಎಂದು ನಿನ್ನನ್ನು ಕೇಳುವರು.</verse>
				<verse number="19">ಆಗ ನೀನು ಅವರಿಗೆ, “ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ, ‘ಇಗೋ, ಎಫ್ರಯಿಮು ಹಿಡಿದಿರುವ ದಂಡವನ್ನು ಅಂದರೆ, ಜೋಸೆಫನ ಮತ್ತು ಜೋಸೆಫನಿಗೆ ಸೇರಿದ ಇಸ್ರಯೇಲ್ ಕುಲಗಳ ದಂಡವನ್ನು ನಾನು ತೆಗೆದು ಜುದೇಯದ ದಂಡಕ್ಕೆ ಉದ್ದವಾಗಿ ಸೇರಿಸಿ ಅವೆರಡನ್ನು ನನ್ನ ಕೈಯಲ್ಲಿ ಒಂದೇ ದಂಡವಾಗಿ ಹಿಡಿಯುವೆನು’ ಎಂಬುದನ್ನು ಹೇಳು.</verse>
				<verse number="20">“ಹಾಗೆ ಹೇಳುವಾಗ ನೀನು ಹೆಸರು ಬರೆದಿರುವ ದಂಡಗಳು ಅವರ ಕಣ್ಣೆದುರಿಗೆ ನಿನ್ನ ಕೈಯಲ್ಲಿರಲಿ.</verse>
				<verse number="21">ಇದನ್ನೂ ಅವರಿಗೆ ನುಡಿ, ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಇಗೋ, ಇಸ್ರಯೇಲರು ವಶವಾಗಿರುವ ಜನಾಂಗಗಳಿಂದ ನಾನು ಅವರನ್ನು ಉದ್ಧರಿಸಿ, ಎಲ್ಲ ಕಡೆಯಿಂದಲು ಒಟ್ಟುಗೂಡಿಸಿ, ಸ್ವದೇಶಕ್ಕೆ ಕರೆದುತರುವೆನು.</verse>
				<verse number="22">ಅಲ್ಲಿ ಇಸ್ರಯೇಲಿನ ಪರ್ವತಗಳ ಮೇಲೆ, ಒಂದೇ ಜನಾಂಗವನ್ನಾಗಿ ಮಾಡುವೆನು; ಒಬ್ಬನೇ ಅವರೆಲ್ಲರಿಗೂ ರಾಜನಾಗಿರುವನು; ಅವರು ಇನ್ನೆಂದಿಗೂ ಎರಡು ಜನಾಂಗದವರಾಗಿರರು; ಭಿನ್ನರಾಜ್ಯದವರಾಗಿ ಇರರು.</verse>
				<verse number="23">ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯ ವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ, ತಮ್ಮನ್ನು ಇನ್ನು ಮುಂದೆ ಹೊಲೆಗೆ ಹೊಯ್ದುಕೊಳ್ಳರು. ಅವರು ಪಾಪ ಮಾಡಿಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದೆಲ್ಲಾ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.</verse>
				<verse number="24">ನನ್ನ ದಾಸ ದಾವೀದನು ಅವರಿಗೆ ರಾಜನಾಗಿರುವನು; ಅವರೆಲ್ಲರಿಗು ಒಬ್ಬನೇ ಪಾಲಕನಿರುವನು; ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವರು.</verse>
				<verse number="25">ನನ್ನ ದಾಸ ಯಕೋಬನಿಗೆ ನಾನು ದಯಪಾಲಿಸಿದ ನಾಡಿನಲ್ಲಿ ಅವರು ವಾಸಿಸುವರು. ಹೌದು, ನಿಮ್ಮ ಪಿತೃಗಳು ವಾಸಿಸಿದ ನಾಡಿನಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ದಾಸ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.</verse>
				<verse number="26">ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.</verse>
				<verse number="27">ಹೌದು, ನನ್ನ ವಾಸಸ್ಥಾನವು ಅವರ ಮಧ್ಯೆಯಿರುವುದು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.</verse>
				<verse number="28">ನನ್ನ ಪವಿತ್ರಾಲಯ ಅವರ ಮಧ್ಯೆ ಶಾಶ್ವತವಾಗಿರಲು ಇಸ್ರಯೇಲನ್ನು ಮೀಸಲು ಮಾಡಿಕೊಂಡಾತ ಸರ್ವೇಶ್ವರ ನಾನೇ ಎಂದು ಜನಾಂಗಗಳಿಗೆ ತಿಳಿದುಬರುವುದು.”</verse>
			</chapter>
			<chapter number="38">
				<verse number="1">ಸರ್ವೇಶ್ವರ ಈ ವಾಣಿಯನ್ನು ನನಗೆ ದಯಪಾಲಿಸಿದರು:</verse>
				<verse number="2">“ನರಪುತ್ರನೇ, ರೋಷಿನವರನ್ನು, ಮೆಷೆಕಿನವರನ್ನು ಹಾಗು ತೂಬಲಿನವರನ್ನು ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ದೈವೋಕ್ತಿಯನ್ನು ನುಡಿ:</verse>
				<verse number="3">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ರಾಜನಾದ ಗೋಗನೇ,</verse>
				<verse number="4">ಇಗೋ, ನಾನು ನಿನಗೆ ವಿರುದ್ಧವಾಗಿ ನಿನ್ನನ್ನು ತಿರುಗಿಸಿ, ನಿನ್ನ ದವಡೆಗೆ ಕೊಕ್ಕೆಹಾಕಿ ಈಚೆಗೆ ಎಳೆಯುವೆನು. ಅಶ್ವಾರೂಢರು, ಖೇಡ್ಯಪ್ರಾಣಿಗಳು, ಎಲ್ಲ ವಿಚಿತ್ರಾಂಬರು ಹಾಗು ಖಡ್ಗಹಸ್ತರು ಆದ ರಾಹುತರ ದೊಡ್ಡ ತಂಡದಿಂದ ಕೂಡಿದ ನಿನ್ನ ಸೈನ್ಯವೆಲ್ಲವನ್ನು,</verse>
				<verse number="5">ಮತ್ತು ಎಲ್ಲ ಖೇಡ್ಯಶಿರಸ್ತ್ರಾಣಧಾರಿಗಳಾದ ಪರ್ಷಿಯರು, ಕೂಸ್ಯರು, ಪೂಟ್ಯರು ಇವರನ್ನು ಹಾಗು</verse>
				<verse number="6">ಪಡೆಪಡೆಯಾದ ಗೋಮೆರ್ಯರನ್ನು, ಉತ್ತರದಿಕ್ಕಿನ ಕಟ್ಟಕಡೆಯಿಂದ ಬಂದ ಪಡೆಪಡೆಯಾದ ತೋಗರ್ಮದವರನ್ನು, ಹೀಗೆ ಅನೇಕಾನೇಕ ಜನಾಂಗಗಳನ್ನು ನಿನ್ನೊಂದಿಗೆ ಬರಮಾಡುವೆನು.</verse>
				<verse number="7">ಸಿದ್ಧವಾಗಿರು, ನಿನ್ನಲ್ಲಿಗೆ ಕೂಡಿಬಂದಿರುವ ಎಲ್ಲ ತಂಡಗಳೊಡನೆ ನಿನ್ನನ್ನು ಸಿದ್ಧಮಾಡಿಕೋ; ನೀನು ಅವುಗಳಿಗೆ ಪಾಲಕನಾಗಿರು.</verse>
				<verse number="8">ಬಹುದಿನಗಳ ಮೇಲೆ ನಿನಗೆ ಅಪ್ಪಣೆಯಾಗಿರುವುದು; ಖಡ್ಗದಿಂದ ನಾಶವಾಗಿ, ಪುನರ್ಜೀವಿತವಾದ ದೇಶದೊಳಗೆ ನೀನು ಕಾಲಾನುಕಾಲಕ್ಕೆ ನುಗ್ಗಿ, ಅನೇಕ ಜನಾಂಗಗಳಿಂದ ಒಟ್ಟುಗೂಡಿದ ನನ್ನ ಜನರ ಮೇಲೆ ಬೀಳುವೆ; ಹೌದು, ಜನಾಂಗಗಳಿಂದ ಪಾರಾದ ಆ ಜನರೆಲ್ಲರು ಬಹುಕಾಲ ಹಾಳಾಗಿದ್ದ ಇಸ್ರಯೇಲಿನ ಪರ್ವತಗಳಲ್ಲಿ ನೆಮ್ಮದಿಯಾಗಿ ವಾಸಿಸುತ್ತಿರುವಾಗ ನೀನು ಅವರ ಮೇಲೆ ಬೀಳುವೆ.</verse>
				<verse number="9">ನೀನೂ ನಿನ್ನ ಎಲ್ಲ ಪಡೆಗಳೂ ನಿನ್ನೊಂದಿಗಿರುವ ಬಹು ಜನಾಂಗಗಳೂ ಬಿರುಗಾಳಿಯಂತೆ ಹೊರಟುಬರುವಿರಿ; ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿರಿ.’</verse>
				<verse number="10">“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಆಗ ನಿನ್ನ ಮನಸ್ಸಿನಲ್ಲಿ ಆಲೋಚನೆಗಳು ಹುಟ್ಟುವುವು:</verse>
				<verse number="11">ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ, ಹಳ್ಳಿಪಳ್ಳಿಗಳು ತುಂಬಿದ ದೇಶವನ್ನು ನುಗ್ಗಿ, ಅಗುಳಿ ಬಾಗಿಲು ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು,’ ಎಂದುಕೊಂಡು ಸೂರೆಗೈಯಲು ಆಶಿಸುವೆ;</verse>
				<verse number="12">‘ಕೊಳ್ಳೆಹೊಡೆಯಬೇಕು, ನಿರ್ಜನವಾಗಿದ್ದು ಜನಭರಿತವಾದ ಪ್ರದೇಶಗಳ ಮೇಲೆ ಕೈಮಾಡಬೇಕು ಹಾಗು ಜನಾಂಗಗಳಿಂದ ಒಟ್ಟುಗೂಡಿ, ದನ ಮೊದಲಾದ ಸೊತ್ತನ್ನು ಸಂಗ್ರಹಿಸಿಕೊಂಡು ಲೋಕದ ನಟ್ಟನಡುವೆ ವಾಸಿಸುವವರನ್ನು ಹತಿಸಬೇಕು’ ಎಂದು ಕುತಂತ್ರ ಕಲ್ಪಿಸುವೆ.</verse>
				<verse number="13">ಶೆಬದವರು, ದೆದಾನಿನವರು, ತಾರ್ಷೀಷಿನ ವರ್ತಕರು ಹಾಗು ಅದರ ಸಿಂಹಪ್ರಾಯರೆಲ್ಲರು ನಿನ್ನನ್ನು ನೋಡಿ, ‘ನೀನು ಸೂರೆಮಾಡಲಿಕ್ಕೆ ಬಂದಿಯೋ? ಕೊಳ್ಳೆಹೊಡೆದು ಬೆಳ್ಳಿಬಂಗಾರವನ್ನು ದೋಚಿಕೊಂಡು, ದನ ಮುಂತಾದ ಸೊತ್ತನ್ನು ಅಪಹರಿಸಿ, ಅಪಾರವಾದ ಆಸ್ತಿಯನ್ನು ಸುಲಿದುಕೊಂಡು ಹೋಗಲು ನಿನ್ನ ತಂಡವನ್ನು ಕೂಡಿಸಿಕೊಂಡು ಬಂದಿಯೋ?’ ಎಂದು ಕೇಳುವರು.</verse>
				<verse number="14">“ಹೀಗಿರಲು ನರಪುತ್ರನೇ, ನೀನು ಗೋಗನಿಗೆ ಈ ದೈವೋಕ್ತಿಯನ್ನು ನುಡಿ: ‘ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನನ್ನ ಜನರಾದ ಇಸ್ರಯೇಲರು ನೆಮ್ಮದಿಯಾಗಿ ವಾಸಿಸುವ ಕಾಲದಲ್ಲಿ ಆ ನೆಮ್ಮದಿಯು ನನಗೆ ಗೊತ್ತಾಗುವುದಿಲ್ಲವೆ?</verse>
				<verse number="15">ನೀನು ನಿನ್ನ ಸ್ಥಳವನ್ನು ಬಿಟ್ಟು, ಅಶ್ವಬಲದ ಮಹಾಸೈನ್ಯವಾಗಿ ಗುಂಪುಕೂಡಿದ ಬಹುಜನಾಂಗಗಳೊಡನೆ ಉತ್ತರದಿಕ್ಕಿನ ಕಟ್ಟಕಡೆಯಿಂದ ಬರುವೆ.</verse>
				<verse number="16">ನನ್ನ ಜನರಾದ ಇಸ್ರಯೇಲರ ಮೇಲೆ ಬಿದ್ದು ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವೆ. ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು, ನಾನೇ ಸರ್ವೇಶ್ವರ ಎಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ನಾಡಿನ ಮೇಲೆ ಬೀಳಮಾಡುವೆನು.</verse>
				<verse number="17">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ನನ್ನ ದಾಸರಾದ ಇಸ್ರಯೇಲಿನ ಪ್ರವಾದಿಗಳು ಪುರಾತನಕಾಲದಲ್ಲಿ ಬಹು ವರ್ಷ ಪ್ರವಾದಿಸುತ್ತಾ ನಾನು ಒಬ್ಬನನ್ನು ಇಸ್ರಯೇಲರ ಮೇಲೆ ಬೀಳಮಾಡುವೆನು, ಎಂದು ಮುಂತಿಳಿಸಿದ್ದರು; ನಾನು ಅವರ ಮುಖಾಂತರ ಮುಂತಿಳಿಸಿದವನು ನೀನೇ ಅಲ್ಲವೇ?’</verse>
				<verse number="18">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಗೋಗನು ಇಸ್ರಯೇಲ್ ನಾಡಿನ ಮೇಲೆ ಬೀಳುವ ದಿನದಲ್ಲಿ ನಾನು ಸಿಟ್ಟಿನಿಂದ ಬುಸುಗುಟ್ಟುವೆನು.</verse>
				<verse number="19">ನಾನು ರೋಷಾನಿಷ್ಟನಾಗಿ ಕೋಪದಿಂದುರಿಯುತ್ತಾ ಹೀಗೆ ನುಡಿದಿದ್ದೇನೆ: ಆಹಾ, ಆ ದಿನದಲ್ಲಿ, ಇಸ್ರಯೇಲ್ ನಾಡಿನೊಳಗೆ ಅದ್ಭುತಕಂಪನವಾಗುವುದು ಖಂಡಿತ;</verse>
				<verse number="20">ಸಮುದ್ರದ ಮೀನುಗಳು, ಆಕಾಶದ ಪಕ್ಷಿಗಳು, ಭೂಜಂತುಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಹಾಗು ಜಗದ ಸಕಲ ಮಾನವರು ನನ್ನೆದುರಿಗೆ ನಡುಗುವರು; ಪರ್ವತಗಳು ಉರುಳಿಹೋಗುವುವು, ಝರಿಗಳು ಕವಚಿಕೊಳ್ಳುವುವು, ಎಲ್ಲ ಗೋಡೆಗಳು ನೆಲಸಮವಾಗುವುವು.</verse>
				<verse number="21">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ಖಡ್ಗವು ನನ್ನ ಪರ್ವತಗಳಲ್ಲೆಲ್ಲಾ ಗೋಗನವರನ್ನು ಸಂಹರಿಸಲಿ,’ ಎಂದು ಅಪ್ಪಣೆಕೊಡುವೆನು; ಒಬ್ಬರಿಂದೊಬ್ಬರು ಹತರಾಗುವರು.</verse>
				<verse number="22">ನಾನು ಗೋಗನ ಸಂಗಡ ವ್ಯಾಜ್ಯವಾಡುತ್ತಾ ಅವನನ್ನು ವ್ಯಾಧಿಗೂ ವಧೆಗೂ ಗುರಿಮಾಡುವೆನು. ಅವನ ಮೇಲೂ ಅವನ ಪಡೆಗಳ ಮೇಲೂ ಅವನೊಂದಿಗಿರುವ ಬಹು ಜನಾಂಗಗಳ ಮೇಲೂ ವಿಪರೀತ ಮಳೆ, ದೊಡ್ಡ ದೊಡ್ಡ ಆನೆಕಲ್ಲು, ಬೆಂಕಿ, ಗಂಧಕ, ಇವುಗಳನ್ನು ಸುರಿಸುವೆನು.</verse>
				<verse number="23">ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಬಹುಜನಾಂಗಗಳು ನಾನೇ ಸರ್ವೇಶ್ವರ ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”</verse>
			</chapter>
			<chapter number="39">
				<verse number="1">“ನರಪುತ್ರನೇ, ನೀನು ಗೋಗನಿಗೆ ವಿರುದ್ಧ ಈ ದೈವೋಕ್ತಿಯನ್ನು ನುಡಿ: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಒಡೆಯನಾದ ಗೋಗನೇ,</verse>
				<verse number="2">ಇಗೋ, ನಾನು ನಿನಗೆ ವಿರುದ್ಧನಾಗಿ, ನಿನ್ನನ್ನು ತಿರುಗಿಸಿ ಮುನ್ನಡೆಸಿ, ಉತ್ತರದಿಕ್ಕಿನ ಕಟ್ಟಕಡೆಯಿಂದ ಬರಮಾಡಿ, ಇಸ್ರಯೇಲಿನ ಪರ್ವತಗಳ ಮೇಲೆ ನುಗ್ಗಿಸಿ,</verse>
				<verse number="3">ನಿನ್ನ ಎಡಗೈಯಿಂದ ಬಿಲ್ಲನ್ನು ಕಿತ್ತುಹಾಕಿ, ನಿನ್ನ ಬಲಗೈಯಿಂದ ಬಾಣಗಳನ್ನು ಉದುರಿಸಿಬಿಡುವೆನು.</verse>
				<verse number="4">ನೀನು, ನಿನ್ನ ಸೇನೆ ಹಾಗು ಪರಿವಾರ ಇಸ್ರಯೇಲಿನ ಪರ್ವತಗಳಲ್ಲಿ ಬಿದ್ದುಬಿಡುವಿರಿ; ನಾನು ನಿಮ್ಮನ್ನು ಮಾಂಸಾಹಾರಿಗಳಾದ ಬಗೆಬಗೆಯ ಹಕ್ಕಿಗಳಿಗೂ ಭೂಜಂತುಗಳಿಗೂ ಆಹಾರ ಮಾಡುವೆನು. ನೀವು ಬಯಲಿನಲ್ಲೇ ಬೀಳುವಿರಿ.</verse>
				<verse number="5">ನಾನೇ ಅಪ್ಪಣೆಕೊಟ್ಟಿದ್ದೇನೆ. ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="6">ನಾನು ಮಾಗೋಗ್ ದೇಶದ ಮೇಲೂ ಕರಾವಳಿಯ ಸೀಮೆಗಳಲ್ಲಿ ನಿರ್ಭಯವಾಗಿ ವಾಸಿಸುವವರ ಮೇಲೂ ಬೆಂಕಿಯನ್ನು ಕಳುಹಿಸುವೆನು; ಆಗ ನಾನೇ ಸರ್ವೇಶ್ವರ ಎಂದು ಅವರಿಗೆ ನಿಶ್ಚಿತವಾಗುವುದು.</verse>
				<verse number="7">ನಾನು ನನ್ನ ಪವಿತ್ರನಾಮವನ್ನು ನನ್ನ ಜನರಾದ ಇಸ್ರಯೇಲರ ನಡುವೆ ವ್ಯಕ್ತಗೊಳಿಸುವೆನು, ಅದನ್ನು ಇನ್ನು ಮುಂದೆ ಅಪಕೀರ್ತಿಗೆ ಗುರಿಯಾಗಲುಬಿಡೆನು; ನಾನೇ ಸರ್ವೇಶ್ವರ, ಇಸ್ರಯೇಲಿನ ಪರಮಪಾವನಸ್ವಾಮಿ ಎಂದು ಜನಾಂಗಗಳಿಗೆ ಗೊತ್ತಾಗುವುದು.”</verse>
				<verse number="8">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಇಗೋ ಬಂದಿತು, ಸಂಭವಿಸಿತು; ನಾನು ಮುಂತಿಳಿಸಿದ ದಿನ ಇದೇ.</verse>
				<verse number="9">ಇಸ್ರಯೇಲಿನ ಪಟ್ಟಣಗಳ ನಿವಾಸಿಗಳು ಬಯಲಿಗೆ ಬಂದು, ಶತ್ರುವಿನ ಆಯುಧಗಳಿಗೆ ಬೆಂಕಿಯಿಕ್ಕಿ ಸುಟ್ಟುಬಿಡುವರು; ಹೌದು, ಖೇಡ್ಯ, ಗುರಾಣಿ, ಬಿಲ್ಲು, ಬಾಣ, ದೊಣ್ಣೆ, ಈಟಿ ಇವುಗಳನ್ನು ಏಳು ವರ್ಷಗಳ ತನಕ ಸುಡುತ್ತಲೇ ಬರುವರು.</verse>
				<verse number="10">ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಉರಿಸುವರು. ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು; ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="11">“ಆ ದಿನದಲ್ಲಿ ನಾನು ಇಸ್ರಯೇಲಿನೊಳಗೆ ಲವಣಸಮುದ್ರದ ಪೂರ್ವದಿಕ್ಕಿನಲ್ಲಿ ಪ್ರಯಾಣಿಕರ ಮಾರ್ಗವಾದ ಕಣಿವೆಯನ್ನು ಗೋಗನಿಗೆ ಹೂಳುವ ಸ್ಥಳವನ್ನಾಗಿ ಏರ್ಪಡಿಸುವೆನು; ಅಲ್ಲಿ ಪ್ರಯಾಣಮಾಡಲು ಆಗುವುದಿಲ್ಲ; ಅಲ್ಲೇ ಗೋಗನನ್ನೂ ಅವನ ಸಮೂಹವೆಲ್ಲವನ್ನೂ ಹೂಣಿಡುವರು; ಅದು ‘ಹಮೋನ್ ಗೋಗ್’ ಕಣಿವೆ ಎನಿಸಿಕೊಳ್ಳುವುದು.</verse>
				<verse number="12">ಇಸ್ರಯೇಲರು ನಾಡನ್ನು ಶುದ್ಧಿಮಾಡುವುದಕ್ಕಾಗಿ ಏಳು ತಿಂಗಳು ಅವರನ್ನು ಹೂಣುತ್ತಲೇ ಇರುವರು.</verse>
				<verse number="13">ಹೌದು, ದೇಶದ ಸಕಲ ಪ್ರಜೆಗಳು ಅವರನ್ನು ಹೂಳಿಬಿಡುವರು. ಹೀಗೆ ನನ್ನ ಮಹಿಮೆಯನ್ನು ಪ್ರತ್ಯಕ್ಷಗೊಳಿಸುವಾಗ ನನ್ನ ಜನರಿಗೆ ಗೌರವ ಉಂಟಾಗುವುದು; ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="14">ತರುವಾಯ ಅವರು ನಾಡನ್ನು ಶುದ್ಧಿಮಾಡುವುದಕ್ಕೆ ತಕ್ಕವರನ್ನು ಆರಿಸಿ, ‘ನೀವು ನಾಡಿನಲ್ಲಿ ತಿರುಗಾಡುತ್ತಾ ನೆಲದ ಮೇಲೆ ಉಳಿದಿರುವ ಎಲುಬುಗಳನ್ನು ಹೂಣಿಡಿ’ ಎಂದು ನಿಯತವಾಗಿ ನೇಮಿಸುವರು; ಏಳು ತಿಂಗಳು ಕಳೆದ ಕೂಡಲೆ, ಇವರು ಈ ಹುಡುಕುವ ಕೆಲಸದಲ್ಲಿ ತೊಡಗುವರು.</verse>
				<verse number="15">ದಾರಿಗಳಲ್ಲಿ ಯಾವನೇ ಆಗಲಿ ಪ್ರಯಾಣ ಮಾಡುತ್ತಿರುವಾಗ ಮನುಷ್ಯನ ಎಲುಬನ್ನು ಕಂಡರೆ ಅಲ್ಲಿ ಒಂದು ಗುರುತನ್ನು ನಿಲ್ಲಿಸುವನು; ಹೂಣಿಡುವವರು ಗೋಗನ ಸಮೂಹದ ಕಣಿವೆಯಲ್ಲಿ ಅದನ್ನು ಹೂಣುವ ತನಕ ಆ ಗುರುತು ಹಾಗೇ ನಿಂತಿರುವುದು.</verse>
				<verse number="16">(ಇದಲ್ಲದೆ ಒಂದು ಪಟ್ಟಣಕ್ಕೆ ‘ಹಮೋನ್’ ಪುರವೆಂದು ಹೆಸರಾಗುವುದು.) ಹೀಗೆ ದೇಶವನ್ನು ಶುದ್ಧಿಮಾಡುವರು.”</verse>
				<verse number="17">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನರಪುತ್ರನೇ, ಎಲ್ಲ ಬಗೆಯ ಪಕ್ಷಿಗಳಿಗೂ ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ: ನೀವು ಕೂಡಿಬನ್ನಿ; ನಾನು ಇಸ್ರಯೇಲಿನ ಪರ್ವತಗಳ ಮೇಲೆ ನಿಮಗಾಗಿ ಮಾಡುವ ಮಹಾಯಜ್ಞಕ್ಕೆ ಎಲ್ಲ ಕಡೆಯಿಂದಲೂ ನೆರೆದುಬಂದು ಮಾಂಸವನ್ನು ತಿಂದು, ರಕ್ತವನ್ನು ಕುಡಿಯಿರಿ.</verse>
				<verse number="18">ಟಗರು, ಕುರಿ, ಹೋತ, ಹೋರಿ, ಅಂತು ಬಾಷಾನಿನ ಕೊಬ್ಬಿದ ಪಶುಗಳು, ಅಂದರೆ ಬಲಿಷ್ಠರು, ಭೂಪತಿಗಳು ಇವರ ಮಾಂಸ ಹಾಗೂ ರಕ್ತ ನಿಮಗೆ ಸಿಕ್ಕುವುವು.</verse>
				<verse number="19">ನಾನು ನಿಮಗಾಗಿ ವಧಿಸಿರುವ ಯಜ್ಞಪಶುಗಳ ಮಾಂಸವನ್ನು ಹೊಟ್ಟೆತುಂಬಾ ತಿನ್ನುವಿರಿ, ರಕ್ತವನ್ನು ಅಮಲೇರುವಷ್ಟು ಕುಡಿಯುವಿರಿ.</verse>
				<verse number="20">ನಾನು ಸಿದ್ಧಪಡಿಸುವ ಆ ಔತಣದಲ್ಲಿ ಕುದುರೆ, ರಾಹುತ ಶೂರ, ಸಕಲವಿಧವಾದ ಯುದ್ಧವೀರರನ್ನು ಯಥೇಚ್ಛವಾಗಿ ಭಕ್ಷಿಸುವಿರಿ; ಇದು ಸರ್ವೇಶ್ವರನಾದ ದೇವರ ನುಡಿ.”</verse>
				<verse number="21">“ಹೀಗೆ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸುವೆನು. ಆಗ ಆ ಸೈನಿಕರ ಮೇಲೆ ಕೈಮಾಡಿ ನ್ಯಾಯದಂಡನೆ ನಡೆಸಿದವನು ನಾನೇ ಎಂದು ಆ ಜನಾಂಗಗಳಿಗೆಲ್ಲಾ ಗೋಚರವಾಗುವುದು,</verse>
				<verse number="22">ಇಸ್ರಯೇಲ್ ವಂಶದವರು, ನಾನೇ ತಮ್ಮ ದೇವರಾದ ಸರ್ವೇಶ್ವರನೆಂದು ಅಂದಿನಿಂದ ಯಾವಾಗಲು ತಿಳಿದುಕೊಳ್ಳುವರು.</verse>
				<verse number="23">ಇದಲ್ಲದೆ, ಇಸ್ರಯೇಲರು ತಮ್ಮ ಅಧರ್ಮದ ನಿಮಿತ್ತವೇ ಸೆರೆಯಾಗಿಹೋದರೆಂದು ಮತ್ತು ಅವರು ನನಗೆ ದ್ರೋಹ ಮಾಡಿದ್ದರಿಂದಲೆ ನಾನು ಅವರಿಗೆ ವಿಮುಖನಾಗಿ ಅವರೆಲ್ಲರು ಖಡ್ಗಹತರಾಗುವಂತೆ ಅವರನ್ನು ಶತ್ರುವಶಮಾಡಿದೆನೆಂದು ಜನಾಂಗಗಳಿಗೆ ಗೊತ್ತಾಗುವುದು;</verse>
				<verse number="24">ಅವರ ಅಶುದ್ಧತನಕ್ಕೂ ದುರಾಚಾರಗಳಿಗೂ ತಕ್ಕಂತೆ ನಾನು ಅವರನ್ನು ದಂಡಿಸಿ ಅವರಿಗೆ ವಿಮುಖನಾದೆನು.”</verse>
				<verse number="25">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನನ್ನ ಪವಿತ್ರನಾಮಕ್ಕೆ ಇನ್ನು ಅಪಕೀರ್ತಿಬಾರದಂತೆ ನಾನು ಈಗ ಆಗ್ರಹವುಳ್ಳವನಾಗಿ ಯಕೋಬ್ಯರ ದುರವಸ್ಥೆಯನ್ನು ತಪ್ಪಿಸಿ ಇಸ್ರಯೇಲ್ ವಂಶದವರಿಗೆಲ್ಲ ಕೃಪೆತೋರುವೆನು.</verse>
				<verse number="26">ನಾನು ನನ್ನ ಜನರನ್ನು ಅನ್ಯಜನಾಂಗಗಳ ವಶದಿಂದ ತಪ್ಪಿಸಿ ಆ ಶತ್ರುಗಳ ದೇಶಗಳಿಂದ ಒಟ್ಟುಗೂಡಿಸಿ, ಬಹುಜನಾಂಗಗಳ ಕಣ್ಣೆದುರಿಗೆ ಅವರ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.</verse>
				<verse number="27">ಅನಂತರ ಅವರು ಸ್ವದೇಶದಲ್ಲಿ ಯಾರ ಭಯವೂ ಇಲ್ಲದೆ ನೆಮ್ಮದಿಯಿಂದ ವಾಸಿಸುತ್ತಿರುವಾಗ ತಾವು ನನಗೆ ಮಾಡಿದ ಎಲ್ಲ ದ್ರೋಹಿಗಳ ಹೊರೆಯನ್ನು ಹೊರುತ್ತಾ ನಾಚಿಕೆಪಡುವರು.</verse>
				<verse number="28">ನಾನು ಅವರನ್ನು ಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿ, ಆಮೇಲೆ ಒಟ್ಟುಗೂಡಿಸಿ, ಸ್ವದೇಶಕ್ಕೆ ತಂದದ್ದರಿಂದ ನಾನೇ ತಮ್ಮ ದೇವರಾದ ಸರ್ವೇಶ್ವರ ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ಸೆರೆಯಲ್ಲಿ ಬಿಟ್ಟುಬಿಡೆನು;</verse>
				<verse number="29">ಇನ್ನೆಂದಿಗೂ ಅವರಿಗೆ ವಿಮುಖನಾಗೆನು; ಇಸ್ರಯೇಲ್ ವಂಶದ ಮೇಲೆ ನನ್ನ ಆತ್ಮವನ್ನು ಸುರಿಸಿದ್ದೇನೆ; ಇದು ಸರ್ವೇಶ್ವರನಾದ ದೇವರ ನುಡಿ.”</verse>
			</chapter>
			<chapter number="40">
				<verse number="1">ನಾವು ಸೆರೆಯಾದ ಇಪ್ಪತ್ತೈದನೆಯ ವರ್ಷದ ಅಂದರೆ, ಪಟ್ಟಣವು ಹಾಳಾದ ಹದಿನಾಲ್ಕನೆಯ ವರ್ಷದ ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಹೌದು, ಆ ದಿನದಲ್ಲೇ ನಾನು ಸರ್ವೇಶ್ವರಸ್ವಾಮಿಯ ಹಸ್ತಸ್ಪರ್ಶದಿಂದ ಪರವಶನಾದೆ. ಆಗ ಅವರು ನನ್ನನ್ನು ಅಲ್ಲಿಗೆ ಒಯ್ದರು.</verse>
				<verse number="2">ನನ್ನನ್ನು ಇಸ್ರಯೇಲ್ ನಾಡಿಗೆ ತಂದು, ಅತ್ಯುನ್ನತ ಪರ್ವತದ ಮೇಲೆ ಇಳಿಸಿದರೆಂದು ದೇವರ ದರ್ಶನದಲ್ಲಿ ನನಗೆ ಕಂಡುಬಂದಿತು. ದಕ್ಷಿಣ ಕಡೆಯಲ್ಲಿ ಆ ಪರ್ವತದ ಮೇಲೆ ಪಟ್ಟಣದಂತಿರುವ ಒಂದು ಕಟ್ಟಡ ಕಾಣಿಸಿತು.</verse>
				<verse number="3">ಅವರು ನನ್ನನ್ನು ಅಲ್ಲಿಗೆ ತರಲು, ಇಗೋ, ತಾಮ್ರದಂತೆ ಹೊಳೆಯುವ ಒಬ್ಬ ಪುರುಷನು ನಾರಿನ ಹುರಿಯನ್ನೂ ಅಳತೆ ಕೋಲನ್ನೂ ಕೈಯಲ್ಲಿ ಹಿಡಿದುಕೊಂಡು ಬಾಗಿಲಲ್ಲಿ ನಿಂತಿದ್ದನು.</verse>
				<verse number="4">ಆ ಪುರುಷ ನನಗೆ, “ನರಪುತ್ರನೇ, ನೀನು ಕಣ್ಣಿಟ್ಟು ನೋಡು, ಕಿವಿಗೊಟ್ಟು ಕೇಳು; ನಾನು ನಿನಗೆ ತೋರಿಸುವುದನ್ನೆಲ್ಲಾ ಮನಸ್ಸಿಟ್ಟು ತಿಳಿದುಕೋ; ನಾನು ನಿನಗೆ ತೋರಿಸುವುದನ್ನು ನೀನು ನೋಡಬೇಕೆಂದೇ ನಿನ್ನನ್ನು ಇಲ್ಲಿಗೆ ತರಲಾಗಿದೆ; ನೀನು ನೋಡುವುದನ್ನೆಲ್ಲ ಇಸ್ರಯೇಲ್ ವಂಶದವರಿಗೆ ಪ್ರಕಟಿಸು,” ಎಂದು ಹೇಳಿದನು.</verse>
				<verse number="5">ಇಗೋ, ಒಂದು ಗೋಡೆಯು ಆ ಕಟ್ಟಡವನ್ನು ಸುತ್ತಿಕೊಂಡಿತ್ತು. ಆ ಪುರುಷನ ಕೈಯಲ್ಲಿ ಮೂರು ಮೀಟರ್ ಅಳತೆಕೋಲೊಂದಿತ್ತು. ಆ ಗೋಡೆ ಮೂರು ಮೀಟರ್ ದಪ್ಪ ಹಾಗು ಮೂರು ಮೀಟರ್ ಎತ್ತರ ಇತ್ತು.</verse>
				<verse number="6">ಆಮೇಲೆ ಅವನು ಪೂರ್ವದಿಕ್ಕಿನ ಹೆಬ್ಬಾಗಿಲಿಗೆ ಬಂದು ಮೆಟ್ಟಲುಗಳನ್ನು ಹತ್ತಿ ಹೊಸ್ತಿಲಿನ ಅಗಲವನ್ನು ಅಳೆದನು. ಒಂದೊಂದು ಹೊಸ್ತಿಲಿನ ಅಗಲವು ಮೂರು ಮೀಟರ್ ಇತ್ತು.</verse>
				<verse number="7">ಅಲ್ಲಿ ಒಂದೊಂದು ಕೋಣೆಯ ಉದ್ದ ಮೂರು ಮೀಟರ್, ಅಗಲ ಮೂರು ಮೀಟರ್.</verse>
				<verse number="8">ಆ ಗೋಡೇಕೋಣೆಗಳು ಒಂದಕ್ಕೊಂದು ಎರಡುವರೆ ಮೀಟರ್ ದೂರವಾಗಿದ್ದವು; ದೇವಸ್ಥಾನಕ್ಕೆ ಎದುರಾಗಿರುವ ಹೆಬ್ಬಾಗಿಲ ಕೈಸಾಲೆಯ ಹೊಸ್ತಿಲಿನ ಅಗಲವು ಮೂರು ಮೀಟರ್.</verse>
				<verse number="9">ಆಮೇಲೆ ಅವನು ಹೆಬ್ಬಾಗಿಲ ಕೈಸಾಲೆಯ ಅಗಲವನ್ನು ಅಳೆದನು; ಅದು ನಾಲ್ಕು ಮೀಟರ್ ಇತ್ತು; ನಿಲವು ಕಂಬಗಳ ಅಗಲ ಒಂದೊಂದು ಮೀಟರ್. ಹೆಬ್ಬಾಗಿಲ ಕೈಸಾಲೆಯು ದೇವಸ್ಥಾನಕ್ಕೆ ಎದುರಾಗಿತ್ತು.</verse>
				<verse number="10">ಪೂರ್ವದಿಕ್ಕಿನ ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ಮೂರು ಮೂರು ಗೋಡೇಕೋಣೆಗಳಿದ್ದವು; ಅವೆಲ್ಲಾ ಒಂದೇ ಅಳತೆ; ಎರಡು ಪಕ್ಕಗಳಲ್ಲಿನ ನಿಲವು ಕಂಬಗಳೂ ಒಂದೇ ಅಳತೆಯಾಗಿದ್ದವು.</verse>
				<verse number="11">ಅನಂತರ ಅವನು ಹೆಬ್ಬಾಗಿಲ ದ್ವಾರವನ್ನು ಅಳೆದನು. ಅಗಲ ಐದು ಮೀಟರ್, ಉದ್ದ ಆರುವರೆ ಮೀಟರ್.</verse>
				<verse number="12">ಎರಡು ಪಕ್ಕಗಳಲ್ಲಿನ ಗೋಡೇಕೋಣೆಗಳ ಮುಂದೆ ಒಂದೊಂದು ಐವತ್ತು ಸೆಂಟಿಮೀಟರ್ ಅವಕಾಶ; ಎರಡು ಕಡೆಯ ಗೋಡೇಕೋಣೆಗಳ ಅಗಲವು ಮೂರು ಮೀಟರ್.</verse>
				<verse number="13">ಅವನು ಒಂದು ಕಡೆಯ ಗೋಡೆಕೋಣೆಗಳ ಮಾಳಿಗೆಯ ಹೊರಕೊನೆಯಿಂದ ಇನ್ನೊಂದು ಕಡೆಯ ಗೋಡೇಕೋಣೆಗಳ ಮಾಳಿಗೆಯ ಹೊರ ಕೊನೆಗೆ, ಅಂದರೆ ಒಂದು ಕೋಣೆಯ ಬಾಗಿಲಿನಿಂದ ಇನ್ನೊಂದು ಕೋಣೆಯ ಬಾಗಿಲಿಗೆ ಹೆಬ್ಬಾಗಿಲಿನ ಅಗಲವನ್ನು ಅಳೆಯಲು ಹನ್ನೆರಡುವರೆ ಮೀಟರಿತ್ತು.</verse>
				<verse number="14">ಪ್ರಾಕಾರದಲ್ಲಿನ ನಿಲವು ಕಂಬದವರೆಗೆ ನಿಲವುಕಂಬಗಳನ್ನು ಅಳತೆಮಾಡಲು ಮೂವತ್ತು ಮೀಟರ್ ಇದ್ದವು. ಹೆಬ್ಬಾಗಿಲನ್ನು ಸುತ್ತುಮುತ್ತಲು ಅಳೆದನು.</verse>
				<verse number="15">ಪ್ರವೇಶಸ್ಥಾನದ ಹೊರಗಡೆಯಿಂದ ಒಳಕೈಸಾಲೆಯ ಕೊನೆಯತನಕ ಹೆಬ್ಬಾಗಿಲು ಇಪ್ಪತ್ತೈದು ಮೀಟರ್ ಉದ್ದವಾಗಿತ್ತು.</verse>
				<verse number="16">ಗೋಡೇಕೋಣೆಗಳಲ್ಲೂ ಒಳಗಣ ಎರಡು ಕಡೆಯ ನಿಲುವುಕಂಬಗಳಲ್ಲೂ ಕೈಸಾಲೆಗಳಲ್ಲೂ ತೆರೆಯಲಾಗದ ಕಿಟಕಿಗಳು ಹೆಬ್ಬಾಗಿಲೊಳಗೆ ಸುತ್ತಮುತ್ತಲು ಇದ್ದವು; ಹೊರಗಣ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು.</verse>
				<verse number="17">ಅನಂತರ ಆ ಪುರುಷ ನನ್ನನ್ನು ಹೊರಗಣ ಪ್ರಾಕಾರಕ್ಕೆ ಕರೆದುತಂದನು; ಇಗೋ, ಕೋಣೆಗಳೂ ಪ್ರಾಕಾರದ ಸುತ್ತಲು ಹಾಕಿದ ನೆಲಗಟ್ಟೂ ಕಾಣಿಸಿದವು. ಒಟ್ಟಾಗಿ ನೆಲೆಗಟ್ಟಿನ ಮೇಲೆ ಮೂವತ್ತು ಕೋಣೆಗಳಿದ್ದವು.</verse>
				<verse number="18">ಆ ಕೆಳಗಣ ನೆಲೆಗಟ್ಟು ಹೆಬ್ಬಾಗಿಲುಗಳ ಎರಡು ಪಕ್ಕಗಳಲ್ಲೂ ಹಾಸಲಾಗಿದ್ದ ಅವುಗಳಷ್ಟು ಅಗಲವಾಗಿತ್ತು.</verse>
				<verse number="19">ಅವನು ಪೂರ್ವದಲ್ಲೂ ಉತ್ತರದಲ್ಲೂ ಕೆಳಗೂ ಹೆಬ್ಬಾಗಿಲಿನ ಒಳಗಡೆಯಿಂದ ಒಳಗಣ ಪ್ರಾಕಾರದ ಹೊರಗಡೆಯ ತನಕ ಅಳೆಯಲು ಐವತ್ತು ಮೀಟರ್ ಇತ್ತು.</verse>
				<verse number="20">ಇದಲ್ಲದೆ ಹೊರಗಣ ಪ್ರಾಕಾರದ ಉತ್ತರದ ಹೆಬ್ಬಾಗಿಲಿನ ಅಗಲವನ್ನೂ ಉದ್ದವನ್ನೂ ಅಳೆದನು.</verse>
				<verse number="21">ಅದರೊಳಗೆ ಎರಡು ಕಡೆ ಗೋಡೇ ಕೋಣೆಗಳು ಮೂರು ಮೂರಿದ್ದವು; ಅಲ್ಲಿನ ನಿಲವುಕಂಬಗಳೂ ಕೈಸಾಲೆಯೂ ಮೊದಲನೆಯ ಹೆಬ್ಬಾಗಿಲಿನ ಅಳತೆಯಂತಿದ್ದವು. ಆ ಹೆಬ್ಬಾಗಿಲಿನ ಉದ್ದ ಇಪ್ಪತ್ತೈದು ಮೀಟರ್, ಅಗಲ ಹನ್ನೆರಡುವರೆ ಮೀಟರ್.</verse>
				<verse number="22">ಅಲ್ಲಿನ ಕಿಟಕಿಗಳೂ ಕೈಸಾಲೆಯೂ ಚಿತ್ರಿತವಾಗಿದ್ದ ಖರ್ಜೂರ ವೃಕ್ಷಗಳೂ ಮೂಡಣ ಹೆಬ್ಬಾಗಿಲುಗಳ ಅಳತೆಯಷ್ಟಿದ್ದವು; ಏಳು ಮೆಟ್ಟಲು ಹತ್ತಿ ಅಲ್ಲಿಗೆ ಸೇರುತ್ತಿದ್ದರು; ಕೈಸಾಲೆ ಒಳಗಡೆಯಿತ್ತು;</verse>
				<verse number="23">ಹೊರಗಣ ಪ್ರಾಕಾರದ ಬಡಗಣ ಮೂಡಣ ಹೆಬ್ಬಾಗಿಲುಗಳಿಗೆ ಎದುರಾಗಿ ಒಳಗಣ ಪ್ರಾಕಾರಕ್ಕೂ ಹೆಬ್ಬಾಗಿಲುಗಳು ಇದ್ದವು. ಒಂದು ಬಾಗಿಲಿನಿಂದ ಎದುರು ಬಾಗಿಲಿಗೆ ಐವತ್ತು ಮೀಟರ್ ಅಳೆದನು.</verse>
				<verse number="24">ಆಮೇಲೆ ಅವನು ನನ್ನನ್ನು ದಕ್ಷಿಣಕ್ಕೆ ಕರೆತಂದನು. ಇಗೋ, ಅಲ್ಲಿಯೂ ಒಂದು ಹೆಬ್ಬಾಗಿಲು; ಅವನು ಅಲ್ಲಿನ ನಿಲವುಕಂಬಗಳನ್ನೂ ಕೈಸಾಲೆಯನ್ನೂ ಅಳೆಯಲು ಹಿಂದಣ ಅಳತೆಗಳೇ ಕಂಡುಬಂದವು.</verse>
				<verse number="25">ಅದರಲ್ಲೂ ಅದರ ಕೈಸಾಲೆಯಲ್ಲೂ ಎಲ್ಲ ಕಡೆ ಅಂಥ ಕಿಟಕಿಗಳೇ ಇದ್ದವು; ಹೆಬ್ಬಾಗಿಲಿನ ಉದ್ದ ಇಪ್ಪತ್ತೈದು ಮೀಟರ್, ಅಗಲ ಹನ್ನೆರಡುವರೆ ಮೀಟರ್.</verse>
				<verse number="26">ಅಲ್ಲಿ ಹತ್ತುವುದಕ್ಕೆ ಏಳು ಮೆಟ್ಟಲುಗಳಿದ್ದವು; ಕೈಸಾಲೆ ಒಳಗಡೆಯಿತ್ತು; ಕೈಸಾಲೆಯ ಎದುರು ಬದುರಿನ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು.</verse>
				<verse number="27">ಒಳಗಿನ ಪ್ರಾಕಾರದಲ್ಲೂ ದಕ್ಷಿಣಕ್ಕೆ ಹೆಬ್ಬಾಗಿಲಿತ್ತು. ದಕ್ಷಿಣದಲ್ಲಿ ಒಂದು ಬಾಗಿಲಿನಿಂದ ಎದುರುಬಾಗಿಲಿಗೆ ಅಳೆದಾಗ ಐವತ್ತು ಮೀಟರ್ ಇತ್ತು.</verse>
				<verse number="28">ಆಮೇಲೆ ಅವನು ನನ್ನನ್ನು ದಕ್ಷಿಣ ಬಾಗಿಲ ಮಾರ್ಗವಾಗಿ ಒಳಗಣ ಪ್ರಾಕಾರಕ್ಕೆ ಕರೆದುತಂದನು. ಅವನು ಆ ದಕ್ಷಿಣ ಹೆಬ್ಬಾಗಿಲನ್ನೂ ಅಲ್ಲಿನ ಗೋಡೇಕೋಣೆ, ನಿಲವುಕಂಬ, ಕೈಸಾಲೆ ಇವುಗಳನ್ನೂ ಅಳೆಯಲು ಅಷ್ಟೇ ಅಳತೆಗಳಿದ್ದವು.</verse>
				<verse number="29">ಅದರಲ್ಲಿಯೂ ಅದರ ಕೈಸಾಲೆಯಲ್ಲಿಯೂ ಕಿಟಕಿಗಳು ಎಲ್ಲ ಕಡೆಯಿದ್ದವು. ಹೆಬ್ಬಾಗಿಲಿನ ಉದ್ದ ಇಪ್ಪತ್ತೈದು ಮೀಟರ್, ಅಗಲ ಹನ್ನೆರಡುವರೆ ಮೀಟರ್.</verse>
				<verse number="30"></verse>
				<verse number="31">ಆ ಹೆಬ್ಬಾಗಿಲ ಕೈಸಾಲೆ ಹೊರಗಣ ಪ್ರಾಕಾರಕ್ಕೆ ಅಭಿಮುಖವಾಗಿತ್ತು; ಅದರ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಲುಗಳಿದ್ದವು.</verse>
				<verse number="32">ಅವನು ನನ್ನನ್ನು ಒಳಗಣ ಪ್ರಾಕಾರದ ಪೂರ್ವಕ್ಕೆ ಕರೆದುತಂದು ಅಲ್ಲಿನ ಹೆಬ್ಬಾಗಿಲನ್ನೂ ಅದರ ಗೋಡೇಕೋಣೆ, ನಿಲವುಕಂಬ, ಕೈಸಾಲೆ ಇವುಗಳನ್ನೂ ಅಳೆಯಲು ಆ ಅಳತೆಗಳೇ ಕಂಡುಬಂದವು.</verse>
				<verse number="33">ಅದರಲ್ಲಿಯೂ ಅದರ ಕೈಸಾಲೆಯಲ್ಲಿಯೂ ಎಲ್ಲಾ ಕಡೆ ಕಿಟಕಿಗಳಿದ್ದವು. ಆ ಹೆಬ್ಬಾಗಿಲಿನ ಉದ್ದ ಇಪ್ಪತ್ತೈದು ಮೀಟರ್, ಅಗಲ ಹನ್ನೆರಡುವರೆ ಮೀಟರ್.</verse>
				<verse number="34">ಅದರ ಕೈಸಾಲೆ ಹೊರಗಣ ಪ್ರಾಕಾರಕ್ಕೆ ಅಭಿಮುಖವಾಗಿತ್ತು. ಕೈಸಾಲೆಯ ಎದುರುಬದುರಿನ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು; ಇಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಲುಗಳಿದ್ದವು.</verse>
				<verse number="35">ಆಮೇಲೆ ಅವನು ನನ್ನನ್ನು ಉತ್ತರ ಬಾಗಿಲಿಗೆ ಕರೆದುತಂದು ಅದನ್ನೂ ಅದರ ಗೋಡೇಕೋಣೆ, ನಿಲವುಕಂಬ, ಕೈಸಾಲೆ ಇವುಗಳನ್ನೂ ಅಳೆಯಲು ಅಲ್ಲಿಯೂ ಆ ಅಳತೆಗಳೇ ಕಂಡುಬಂದವು;</verse>
				<verse number="36">ಅದರಲ್ಲಿ ಎಲ್ಲಾ ಕಡೆ ಕಿಟಕಿಗಳಿದ್ದವು; ಅದರ ಉದ್ದ ಇಪ್ಪತ್ತೈದು ಮೀಟರ್, ಅಗಲ ಹನ್ನೆರಡುವರೆ ಮೀಟರ್.</verse>
				<verse number="37">ಆದರೆ ನಿಲವುಕಂಬಗಳು ಹೊರಗಣ ಪ್ರಾಕಾರಕ್ಕೆ ಅಭಿಮುಖವಾಗಿದ್ದವು. ಆ ಎದುರುಬದುರಿನ ನಿಲವುಕಂಬಗಳಲ್ಲಿ ಖರ್ಜೂರ ವೃಕ್ಷಗಳು ಚಿತ್ರಿತವಾಗಿದ್ದವು; ಅಲ್ಲಿ ಹತ್ತುವುದಕ್ಕೆ ಎಂಟು ಮೆಟ್ಟಲುಗಳಿದ್ದವು.</verse>
				<verse number="38">ಹೆಬ್ಬಾಗಿಲ ನಿಲವುಕಂಬಗಳ ಪಕ್ಕದಲ್ಲಿ ಒಂದು ಕೊಠಡಿಯೂ ಅದರ ದ್ವಾರವೂ ಕಾಣಿಸಿದವು. ಆ ಕೋಣೆಯೊಳಗೆ ದಹನ ಬಲಿಪ್ರಾಣಿಗಳ ಮಾಂಸವನ್ನು ತೊಳೆಯುತ್ತಿದ್ದರು.</verse>
				<verse number="39">ಹೆಬ್ಬಾಗಿಲ ಕೈಸಾಲೆಯಲ್ಲಿ ಎರಡು ಕಡೆಯಲ್ಲೂ ಎರಡೆರಡು ಪೀಠಗಳಿದ್ದವು. ಅವುಗಳ ಮೇಲೆ ದಹನಬಲಿಪ್ರಾಣಿ, ದೋಷಪರಿಹಾರಕ ಬಲಿಪ್ರಾಣಿ, ಪ್ರಾಯಶ್ಚಿತ್ತ ಬಲಿಪ್ರಾಣಿ, ಇವುಗಳನ್ನು ವಧಿಸುತ್ತಿದ್ದರು.</verse>
				<verse number="40">ಉತ್ತರ ಹೆಬ್ಬಾಗಿಲ ಪ್ರವೇಶಸ್ಥಾನದ ಮೆಟ್ಟಲುಗಳ ಹತ್ತಿರ, ಆ ಬಾಗಿಲ ಕೈಸಾಲೆಯ ಹೊರಗೆ, ಒಂದು ಕೊನೆಯಲ್ಲಿ ಎರಡು ಪೀಠಗಳು ಇದ್ದವು.</verse>
				<verse number="41">ಹೆಬ್ಬಾಗಿಲಿನ ಎರಡು ಪಕ್ಕಗಳಲ್ಲಿ ಇತ್ತ ನಾಲ್ಕು, ಅತ್ತ ನಾಲ್ಕು ಪೀಠಗಳು, ಒಟ್ಟಿಗೆ ಬಲಿಪ್ರಾಣಿಗಳನ್ನು ವಧಿಸುವ ಎಂಟು ಪೀಠಗಳಿದ್ದವು.</verse>
				<verse number="42">ಇದಲ್ಲದೆ ದಹನಬಲಿಗೆ ಉಪಯುಕ್ತವಾದ, ಕೆತ್ತಿದ ಕಲ್ಲಿನ ನಾಲ್ಕು ಪೀಠಗಳಿದ್ದವು; ಅವುಗಳ ಉದ್ದ ಎಪ್ಪತ್ತೈದು ಸೆಂಟಿಮೀಟರ್, ಎತ್ತರ ಐವತ್ತು ಸೆಂಟಿಮೀಟರ್, ಅವುಗಳ ಮೇಲೆ ದಹನಬಲಿಪಶುಗಳ ವಧೆಯ ಉಪಕರಣಗಳನ್ನು ಇಡುತ್ತಿದ್ದರು.</verse>
				<verse number="43">ಅಂಚಿನಲ್ಲಿ ಎಪ್ಪತ್ತೈದು ಮಿಲಿಮೀಟರ್ ದಿಂಡು ಕಟ್ಟಿತ್ತು; ನೈವೇದ್ಯ ಮಾಂಸವು ಪೀಠಗಳ ಮೇಲಿತ್ತು.</verse>
				<verse number="44">ಆಮೇಲೆ ಆ ಪುರುಷ ನನ್ನನ್ನು ಒಳಗಣ ಪ್ರಾಕಾರಕ್ಕೆ ಕರೆದುತಂದನು. ಇಗೋ, ಅಲ್ಲಿ ಎರಡು ಕೋಣೆಗಳು ಕಾಣಿಸಿದವು. ಉತ್ತರ ಹೆಬ್ಬಾಗಿಲ ಪಕ್ಕದಲ್ಲಿ ಒಂದು ಕೋಣೆಯು ದಕ್ಷಿಣಕ್ಕೆ ಅಭಿಮುಖವಾಗಿತ್ತು; ದಕ್ಷಿಣ ಹೆಬ್ಬಾಗಿಲ ಪಕ್ಕದಲ್ಲಿ ಇನ್ನೊಂದು ಕೋಣೆ ಉತ್ತರಕ್ಕೆ ಅಭಿಮುಖವಾಗಿತ್ತು.</verse>
				<verse number="45">ಆಗ ಅವನು ನನಗೆ ದಕ್ಷಿಣಕ್ಕೆ ಅಭಿಮುಖವಾಗಿರುವ ಈ ಕೋಣೆ ದೇವಾಲಯ ಪಾರುಪತ್ಯವನ್ನು ನಡೆಸುವ ಯಾಜಕರಿಗೆ ನೇಮಕವಾಗಿದೆ.</verse>
				<verse number="46">ಉತ್ತರಕ್ಕೆ ಅಭಿಮುಖವಾಗಿರುವ ಆ ಕೋಣೆ ಬಲಿಪೀಠದ ಕಾರ್ಯದರ್ಶಿಗಳಾದ ಯಾಜಕರಿಗೆ ನೇಮಕವಾಗಿದೆ. ಚಾದೋಕನ ಸಂತತಿಯವರಾದ ಇವರು ಲೇವಿಯ ಕುಲದವರಲ್ಲಿ ಸರ್ವೇಶ್ವರನ ಸನ್ನಿಧಿಸೇವಕರಾಗಿದ್ದಾರೆ ಎಂದು ಹೇಳಿದನು.</verse>
				<verse number="47">ಆಮೇಲೆ ಅವನು ಪ್ರಾಕಾರವನ್ನು ಅಳೆಯಲು ಅದು ಐವತ್ತು ಮೀಟರ್ ಉದ್ದವಾಗಿಯೂ ಐವತ್ತು ಮೀಟರ್ ಅಗಲವಾಗಿಯೂ ಚಚ್ಚೌಕವಾಗಿತ್ತು; ಬಲಿಪೀಠವು ದೇವಸ್ಥಾನದ ಮುಂದೆ ಇತ್ತು.</verse>
				<verse number="48">ಕೂಡಲೆ ಆ ಪುರುಷ ನನ್ನನ್ನು ದೇವಸ್ಥಾನದ ದ್ವಾರಮಂಟಪಕ್ಕೆ ಕರೆದುತಂದು ಅದನ್ನು ಅಳೆದನು. ಅದರ ಎದುರುಬದುರಿನ ನಿಲವುಕಂಬಗಳ ಅಗಲ ಎರಡುವರೆ ಮೀಟರುಗಳು, ಬಾಗಿಲಿನ ಎರಡು ಪಕ್ಕದ ಗೋಡೆಗಳ ಅಗಲ ಅರ್ಧರ್ಧ ಮೀಟರ್,</verse>
				<verse number="49">ದ್ವಾರಮಂಟಪದ ಉದ್ದ ಹತ್ತು ಮೀಟರ್, ಅಗಲ ಐದುವರೆ ಮೀಟರ್ ಇದ್ದವು. ಹತ್ತು ಮೆಟ್ಟಲುಗಳನ್ನು ಹತ್ತಿ ಅಲ್ಲಿಗೆ ಸೇರುತ್ತಿದ್ದರು. ಎರಡು ಕಡೆಯ ನಿಲವುಕಂಬಗಳ ಪಕ್ಕದಲ್ಲಿ ಒಂದೊಂದು ಉಪಸ್ತಂಭ ಇತ್ತು.</verse>
			</chapter>
			<chapter number="41">
				<verse number="1">ಆಮೇಲೆ ಆ ಪುರುಷ ನನ್ನನ್ನು ಪರಿಶುದ್ಧಸ್ಥಳಕ್ಕೆ ತಂದು ಅದನ್ನು ಅಳೆಯಲು ಅದರ ಎದುರುಬದುರಿನ ನಿಲವುಕಂಬಗಳ ಅಗಲ ದೇವರ ಗುಡಾರದ ಅಗಲದಂತೆ ಮೂರು ಮೂರು ಮೀಟರ್,</verse>
				<verse number="2">ದ್ವಾರದ ಅಗಲ ಐದು ಮೀಟರು ದ್ವಾರದ ಎರಡು ಪಕ್ಕದ ಗೋಡೆಗಳ ಅಗಲ ಎರಡುವರೆ ಎರಡುವರೆ ಮೀಟರ್, ಪರಿಶುದ್ಧ ಸ್ಥಳದ ಉದ್ದ ಇಪ್ಪತ್ತು ಮೀಟರ್, ಅಗಲ ಹತ್ತು ಮೀಟರ್ ಇದ್ದವು.</verse>
				<verse number="3">ಆಮೇಲೆ ಆ ಪುರುಷ ಇನ್ನೂ ಮುಂದಕ್ಕೆ ಹೋಗಿ ಪರಿಶುದ್ಧ ಸ್ಥಳದ ಕೊನೆಯಲ್ಲಿ ಗರ್ಭಗೃಹವನ್ನು ಅಳೆಯಲು ದ್ವಾರದ ಒಂದೊಂದು ನಿಲವುಕಂಬದ ಅಗಲ ಒಂದೊಂದು ಮೀಟರ್, ದ್ವಾರದ ಅಗಲ ಮೂರು ಮೀಟರ್.</verse>
				<verse number="4">ದ್ವಾರದ ಪಕ್ಕದ ಗೋಡೆಗಳ ಅಗಲ ಮೂರುವರೆ ಮೂರುವರೆ ಮೀಟರ್, ಗರ್ಭ ಗೃಹದ ಉದ್ದ ಹತ್ತು ಮೀಟರ್, ಅಗಲ ಹತ್ತು ಮೀಟರ್ ಇದ್ದವು. ಆಗ ಅವನು ನನಗೆ, “ಇದು ಮಹಾಪರಿಶುದ್ಧ ಸ್ಥಳ,” ಎಂದು ಹೇಳಿದನು.</verse>
				<verse number="5">ಆಮೇಲೆ ಆ ಪುರುಷ ಅಳೆಯಲು ದೇವಸ್ಥಾನದ ಗೋಡೆಯ ಅಗಲ ಮೂರು ಮೀಟರ್. ದೇವಸ್ಥಾನದ ಸುತ್ತುಮುತ್ತಲು ಎಲ್ಲಕಡೆ ಅದರ ಪಕ್ಕಗಳಿಗೆ ಅಂಟಿಕೊಂಡಿದ್ದ ಕೊಠಡಿಗಳ ಅಗಲ ಎರಡೆರಡು ಮೀಟರ್ ಇದ್ದವು.</verse>
				<verse number="6">ಆ ಕೊಠಡಿಗಳು ಒಂದರ ಮೇಲೆ ಮೇಲೊಂದು ಮೂರಂತಸ್ತಾಗಿದ್ದವು. ಒಂದೊಂದು ಅಂತಸ್ತಿನಲ್ಲಿ ಮೂವತ್ತು ಮೂವತ್ತು ಕೊಠಡಿಗಳಿದ್ದವು. ದೇವಸ್ಥಾನದ ಗೋಡೆಯನ್ನು ಮೆಟ್ಟಲು ಮೆಟ್ಟಲಾಗಿ ಕಟ್ಟಲಾಗಿತ್ತು. ಗೋಡೆಯಲ್ಲಿ ತೂತಿಲ್ಲದೆ ಆ ಮೆಟ್ಟಲುಗಳೇ ಸುತ್ತಣ ಕೊಠಡಿಗಳ ತೊಲೆಗಳಿಗೆ ಆಧಾರವಾಗಿದ್ದವು.</verse>
				<verse number="7">ಸುತ್ತಣ ಅಂತಸ್ತುಗಳು ಮೇಲೆ ಮೇಲೆ ಹೋದಹಾಗೆಲ್ಲಾ ಆಯಾ ಕೊಠಡಿಗಳ ಅಗಲವು ಹೆಚ್ಚುತ್ತಾ ಬಂದಿತು; ಅವು ದೇವಸ್ಥಾನವನ್ನು ಸುತ್ತಿಕೊಂಡು ಮೇಲೆ ಮೇಲೆ ಹೋದಹಾಗೆಲ್ಲಾ ಅದನ್ನು ಬಿಗಿಬಿಗಿಯಾಗಿ ತಬ್ಬಿಕೊಂಡಂತೆ ಇದ್ದವು. ಹೀಗೆ ಮೇಲು ಮೇಲಿನ ಅಂತಸ್ತುಗಳು ದೇವಸ್ಥಾನದ ಕಡೆಗೆ ಅಗಲವಾಗುತ್ತಾ ಬಂದವು; ಕೆಳಗಣ ಅಂತಸ್ತಿನಿಂದ ನಡುವಣ ಅಂತಸ್ತಿನ ಮಾರ್ಗವಾಗಿ ಮೇಲಣ ಅಂತಸ್ತಿಗೆ ಹತ್ತುತ್ತಿದ್ದರು.</verse>
				<verse number="8">ದೇವಸ್ಥಾನದ ಸುತ್ತಮುತ್ತಲು ಒಂದು ಜಗಲಿ ಕಾಣಿಸಿತು. ಅದು ಕೊಠಡಿಗಳಿಗೆ ತಳಹದಿಯಾಗಿ ನೆಲಮಟ್ಟದಿಂದ ಮೂರು ಮೀಟರ್ ಅಳತೇ ಕೋಲಿನಷ್ಟು ಎತ್ತರವಾಗಿತ್ತು.</verse>
				<verse number="9">ಕೊಠಡಿಗಳ ಹೊರಗೋಡೆಯ ದಪ್ಪ ಎರಡುವರೆ ಮೀಟರಿತ್ತು.</verse>
				<verse number="10">ದೇವಸ್ಥಾನಕ್ಕೆ ಅಂಟಿಕೊಂಡ ಆ ಕೊಠಡಿಗಳಿಗೂ ದೀಕ್ಷಿತ ಯಾಜಕರ ಕೋಣೆಗಳಿಗೂ ನಡುವೆ ದೇವಸ್ಥಾನದ ಸುತ್ತುಮುತ್ತಲೂ ಹತ್ತು ಮೀಟರ್ ಅಂತರವಿತ್ತು.</verse>
				<verse number="11">ಆ ಎಲ್ಲ ಕೊಠಡಿಗಳ ಪ್ರವೇಶಕ್ಕೂ ಎರಡೇ ಬಾಗಿಲು, ಉತ್ತರ ದಕ್ಷಿಣಕ್ಕೊಂದೊಂದು. ಅವೆರಡೂ ಜಗಲಿಯ ಕಡೆಗಿದ್ದವು; ಆ ಜಗಲಿ ಎಲ್ಲ ಕಡೆ ಎರಡುವರೆ ಮೀಟರ್ ಅಗಲವಾಗಿತ್ತು.</verse>
				<verse number="12">ಪಶ್ಚಿಮದಲ್ಲಿ ದೀಕ್ಷಿತರ ಪ್ರಾಕಾರದ ಹಿಂದಿನ ಶಾಲೆಯ ಅಗಲ ಮೂವತ್ತೈದು ಮೀಟರ್, ಉದ್ದ ನಲವತ್ತೈದು ಮೀಟರ್, ಅದರ ಗೋಡೆಯ ದಪ್ಪ ಎರಡುವರೆ ಮೀಟರ್.</verse>
				<verse number="13">ಆ ಪುರುಷ ಅಳೆದಾಗ ದೇವಸ್ಥಾನದ ಉದ್ದ ಐವತ್ತು ಮೀಟರ್, ದೀಕ್ಷಿತರ ಪ್ರಾಕಾರ, ಶಾಲೆಶಾಲೆಯ ಗೋಡೆಗಳು, ಇವುಗಳ ಒಟ್ಟಗಲ ಐವತ್ತು ಮೀಟರ್.</verse>
				<verse number="14">ಪೂರ್ವದಲ್ಲಿನ ದೇವಸ್ಥಾನದ ಮುಖ, ದೀಕ್ಷಿತರ ಪ್ರಾಕಾರ, ಇವುಗಳ ಒಟ್ಟಗಲ ಐವತ್ತು ಮೀಟರ್ ಇದ್ದವು.</verse>
				<verse number="15">ಅವನು ದೀಕ್ಷಿತರ ಪ್ರಾಕಾರದ ಹಿಂದಿನ ಶಾಲೆಯನ್ನು ಆ ಪ್ರಾಕಾರದ ಕಡೆಯಲ್ಲಿ ಅಳೆಯಲು ಅದರ ಉದ್ದ ಎರಡು ಪಕ್ಕದ ಗೋಡೆಗಳ ಸಹಿತ ಐವತ್ತು ಮೀಟರಿತ್ತು.</verse>
				<verse number="16">ಗರ್ಭಗೃಹ, ಪ್ರಾಕಾರದಲ್ಲಿನ ದ್ವಾರಮಂಟಪಗಳು, ಹೊಸ್ತಿಲುಗಳು, ತೆರೆಯಲಾಗದ ಕಿಟಕಿಗಳು, ಹೊಸ್ತಿಲಿನ ಎದುರಿಗೆ ಮೂರಂತಸ್ತಾಗಿ ಸುತ್ತಲು ಕಟ್ಟಲಾಗಿದ್ದ ಗೋಡೆಯಟ್ಟಗಳು, ಇವುಗಳನ್ನೂ ಅಳೆದನು.</verse>
				<verse number="17">ನೆಲದಿಂದ ಕಿಟಕಿಗಳವರೆಗೂ ದ್ವಾರದ ಮೇಲೂ ಗರ್ಭಗೃಹದ ಮತ್ತು ಈಚಿನ ಗೃಹದ ಗೋಡೆಗೆಲ್ಲಾ ಸುತ್ತುಮುತ್ತಲು ಹಲಗೆಗಳನ್ನು ಚೌಕಚೌಕವಾಗಿ ಹೊದಿಸಲಾಗಿತ್ತು. ಕಿಟಕಿಗಳ ಪಕ್ಕಗಳಿಗೂ ಹಲಿಗೆಯ ಹೊದಿಕೆಯಿತ್ತು.</verse>
				<verse number="18">ಆ ಚೌಕಗಳಲ್ಲಿ ಕೆರೂಬಿಗಳೂ ಖರ್ಜೂರ ವೃಕ್ಷಗಳೂ ಚಿತ್ರಿತವಾಗಿದ್ದವು; ಎರಡೆರಡು ಕೆರೂಬಿಗಳ ನಡುವೆ ಒಂದೊಂದು ಖರ್ಜೂರ ವೃಕ್ಷ; ಒಂದೊಂದು ಕೆರೂಬಿಗೆ ಎರಡೆರಡು ಮುಖ;</verse>
				<verse number="19">ಖರ್ಜೂರ ವೃಕ್ಷದ ಒಂದು ಪಕ್ಕವು ಮನುಷ್ಯಮುಖಕ್ಕೆ ಎದುರು, ಇನ್ನೊಂದು ಪಕ್ಕವು ಸಿಂಹಮುಖಕ್ಕೆ ಎದುರು; ದೇವಸ್ಥಾನದ ಒಳಭಾಗವೆಲ್ಲಾ ಸುತ್ತಮುತ್ತ ಹೀಗೆ ಚಿತ್ರಮಯವಾಗಿತ್ತು.</verse>
				<verse number="20">ನೆಲದಿಂದ ದಾರವಂದದ ಮೇಲ್ಮಟ್ಟದ ತನಕ ಕೆರೂಬಿಗಳೂ ಖರ್ಜೂರ ವೃಕ್ಷಗಳೂ ಚಿತ್ರಿತವಾಗಿದ್ದವು.</verse>
				<verse number="21">ಪರಿಶುದ್ಧಸ್ಥಳದ ಈಚಿನ ಗೋಡೆಯ ಬಾಗಿಲ ಚೌಕಟ್ಟು ಚಚ್ಚೌಕವಾಗಿತ್ತು; ಮಹಾಪರಿಶುದ್ಧ ಸ್ಥಳದ ಈಚಿನ ಗೋಡೆಯ ಚೌಕಟ್ಟು ಹಾಗೆಯೇ ಇತ್ತು.</verse>
				<verse number="22">ಅಲ್ಲಿ ಮರದ ವೇದಿಕೆಯೊಂದಿತ್ತು: ಅದರ ಎತ್ತರ ಒಂದೂವರೆ ಮೀಟರ್, ಉದ್ದ ಒಂದು ಮೀಟರ್; ಅದರ ಮೂಲೆಗಳು, ಪೀಠ ಹಾಗು ಪಕ್ಕೆಗಳು ಮರದ್ದೇ ಆಗಿದ್ದವು. ಆ ಪುರುಷ ನನಗೆ, “ಇದು ಸರ್ವೇಶ್ವರನ ಸಮ್ಮುಖದ ಮೇಜು,” ಎಂದು ಹೇಳಿದನು.</verse>
				<verse number="23">ಪರಿಶುದ್ಧ ಸ್ಥಳದ ಮತ್ತು ಮಹಾಪರಿಶುದ್ಧ ಸ್ಥಳದ ಬಾಗಿಲುಗಳಿಗೆ ಎರಡೆರಡು ಕದಗಳು,</verse>
				<verse number="24">ಒಂದೊಂದು ಕದಕ್ಕೆ ಎರಡೆರಡು ಮಡಚುವ ಭಾಗಗಳು; ಇತ್ತಕಡೆಯ ಕದಕ್ಕೆ ಎರಡು ಭಾಗ; ಅತ್ತಕಡೆಯ ಕದಕ್ಕೆ ಎರಡು ಭಾಗ ಇದ್ದವು.</verse>
				<verse number="25">ಆ ಕದಗಳಲ್ಲಿ, ಅಂದರೆ ಪರಿಶುದ್ಧ ಸ್ಥಳದ ಕದಗಳಲ್ಲಿ ಕೆರೂಬಿಗಳು ಹಾಗು ಖರ್ಜೂರ ವೃಕ್ಷಗಳು ಗೋಡೆಗಳಲ್ಲಿ ಚಿತ್ರಿತವಾಗಿದ್ದ ಹಾಗೆಯೇ ಚಿತ್ರಿತವಾಗಿದ್ದವು. ದ್ವಾರಮಂಟಪದ ಹೊರಗಡೆ ಮರದ ಸೂರು ಇತ್ತು.</verse>
				<verse number="26">ದ್ವಾರಮಂಟಪದ ಪಕ್ಕದ ಗೋಡೆಗಳಲ್ಲಿ ತೆರೆಯಲಾಗದ ಕಿಟಕಿಗಳೂ ಚಿತ್ರಿತ ಖರ್ಜೂರ ವೃಕ್ಷಗಳೂ ಇದ್ದವು.</verse>
			</chapter>
			<chapter number="42">
				<verse number="1">ಆಮೇಲೆ ಅವನು ನನ್ನನ್ನು ಉತ್ತರದ ಮಾರ್ಗವಾಗಿ ಹೊರಗಣ ಪ್ರಾಕಾರಕ್ಕೆ ಬರಮಾಡಿ ದೀಕ್ಷಿತರ ಪ್ರಾಕಾರಕ್ಕೂ ಉತ್ತರದ ಪೌಳಿಗೋಡೆಗಳಿಗೂ ನಡುವಣ ಕೋಣೆಗಳಿಗೆ ಕರೆದುತಂದು</verse>
				<verse number="2">ಉತ್ತರದ ಬಾಗಿಲುಳ್ಳ ಕೋಣೆಗಳ ಸಾಲಿನ ಮುಂದೆ ನಿಲ್ಲಿಸಿದನು. ಆ ಸಾಲಿನ ಉದ್ದ ಐವತ್ತು ಮೀಟರ್.</verse>
				<verse number="3">ಒಳಗಣ ಪ್ರಾಕಾರಕ್ಕೆ ಸೇರಿದ ಹತ್ತು ಮೀಟರ್ ಅಗಲದ ದೀಕ್ಷಿತರ ಪ್ರಾಕಾರಕ್ಕೂ ಹೊರಗಣ ಪ್ರಾಕಾರದ ನೆಲಗಟ್ಟಿಗೂ ನಡುವೆಯಿದ್ದ ಆ ಪ್ರದೇಶ ಇಪ್ಪತ್ತೈದು ಮೀಟರ್ ಅಗಲ. ಅಲ್ಲಿನ ಎರಡು ಸಾಲುಗಳ ಮೂರನೆಯ ಅಂತಸ್ತಿನ ಅಂಚಿನ ದಾರಿಗಳು ಒಂದಕ್ಕೊಂದು ಎದುರಾಗಿದ್ದವು.</verse>
				<verse number="4">ಆ ಸಾಲುಗಳ ನಡುವೆ ಐವತ್ತು ಮೀಟರ್ ಉದ್ದದ, ಐದು ಮೀಟರ್ ಅಗಲದ ಓಣಿಯೊಂದಿತ್ತು; ಕೋಣೆಗಳ ಬಾಗಿಲುಗಳು ಉತ್ತರದ ಕಡೆಗಿದ್ದವು.</verse>
				<verse number="5">ಮೇಲಣ ಕೋಣೆಗಳು ನಡುವಣ ಮತ್ತು ಕೆಳಗಣ ಕೋಣೆಗಳಿಗಿಂತ ಇಕ್ಕಟ್ಟಾಗಿದ್ದವು. ಅಂಚಿನ ದಾರಿಗಳು ಅವುಗಳ ಅಗಲವನ್ನು ತಿಂದುಬಿಟ್ಟಿದ್ದವು.</verse>
				<verse number="6">ಕೋಣೆಗಳು ಮೂರಂತಸ್ತಾಗಿದ್ದವು; ಹೊರಗಿನ ಪ್ರಾಕಾರದ ಕೋಣೆಗಳಿಗೆ ಇದ್ದಂತೆ ಈ ಕೋಣೆಗಳಿಗೆ ಕೈಸಾಲೆಗಳಿರಲಿಲ್ಲ; ಆದುದರಿಂದ ನೆಲಕ್ಕೆತ್ತರದಲ್ಲಿನ ಮೇಲಿನ ಕೋಣೆಗಳು ಕೆಳಗಿನ ಮತ್ತು ನಡುವಣ ಕೋಣೆಗಳಿಗಿಂತ ಇಕ್ಕಟ್ಟಾಗಿದ್ದವು.</verse>
				<verse number="7">ಹೊರಗಿನ ಪ್ರಾಕಾರದ ಕಡೆಗಿರುವ ಕೋಣೆಗಳ ಸಾಲಿಗೆ ಸಮವಾಗಿ ಹೊರ ಗೋಡೆಯೊಂದಿತ್ತು. ಅದು ಇಪ್ಪತ್ತೈದು ಮೀಟರ್ ಉದ್ದವಾಗಿ ಎರಡನೆಯ ಸಾಲಿಗೆ ಎದುರಾಗಿತ್ತು.</verse>
				<verse number="8">ಹೊರಗಣ ಪ್ರಾಕಾರದ ಕಡೆಗಿರುವ ಕೋಣೆಗಳ ಸಾಲಿನ ಉದ್ದವು ಇಪ್ಪತ್ತೈದು ಮೀಟರ್, ದೇವಸ್ಥಾನದ ಕಡೆಗಿರುವ ಕೋಣೆಗಳ ಸಾಲಿನ ಉದ್ದವು ಐವತ್ತು ಮೀಟರ್.</verse>
				<verse number="9">ಕೋಣೆಗಳ ಪ್ರಾಕಾರದ ಪೂರ್ವದಲ್ಲಿ ಕೆಳಗಿನ ಮಟ್ಟದಲ್ಲಿ ಆ ಪ್ರಾಕಾರದ ಗೋಡೆಯ ನಡುವೆ ಹೊರಗಿನ ಪ್ರಾಕಾರದಿಂದ ಅಲ್ಲಿಗೆ ಸೇರುವ ಮಾರ್ಗವಿತ್ತು.</verse>
				<verse number="10">ಇದಲ್ಲದೆ, ಪೂರ್ವದಕಡೆ ದೀಕ್ಷಿತರ ಪ್ರಾಕಾರಕ್ಕೂ ಪೌಳಿಗೋಡೆಗೂ ನಡುವೆ ಕೊಠಡಿಗಳಿದ್ದವು.</verse>
				<verse number="11">ಇವುಗಳ ಮುಂದೆ ಓಣಿಯೊಂದಿತ್ತು; ಅವು ಉತ್ತರದ ಕೋಣೆಗಳಂತೆ ಕಾಣಿಸುತ್ತಿದ್ದವು. ಇವುಗಳ ಉದ್ದ ಹಾಗು ಅಗಲ ಅವುಗಳ ಉದ್ದ ಹಾಗು ಅಗಲ ಒಂದೆ. ಇವುಗಳ ರಚನಾಕ್ರಮದ್ವಾರ, ನಿರ್ಗಮಸ್ಥಾನಗಳೆಲ್ಲವೂ ಅವುಗಳಂತಿದ್ದವು, ದಕ್ಷಿಣ ಕೋಣೆಗಳು ಹಾಗೆಯೇ ಇದ್ದವು.</verse>
				<verse number="12">ಕೋಣೆಗಳ ಪ್ರಾಕಾರವನ್ನು ಪೂರ್ವದಲ್ಲಿ ಸೇರುವ ಕಡೆ, ಗೋಡೆಯ ಪಕ್ಕದಲ್ಲಿ ಇರುವ ದಾರಿಯ ಕೊನೆಯಲ್ಲಿ ಒಂದು ಬಾಗಿಲಿತ್ತು.</verse>
				<verse number="13">ಆಗ ನನಗೆ, ‘ದೀಕ್ಷಿತರ ಪ್ರಾಕಾರದ ಉತ್ತರ ದಕ್ಷಿಣ ಕಡೆಗಳಲ್ಲಿನ ಕೋಣೆಗಳು ಪರಿಶುದ್ಧವಾದವು; ಅಲ್ಲಿ ಸರ್ವೇಶ್ವರನ ಸನ್ನಿಧಿಸೇವಕರಾದ ಯಾಜಕರು ಮಹಾಪರಿಶುದ್ಧ ಪದಾರ್ಥಗಳನ್ನು ಭುಜಿಸುತ್ತಾರೆ, ಮತ್ತು ಧಾನ್ಯನೈವೇದ್ಯ ದೋಷಪರಿಹಾರಕಬಲಿದ್ರವ್ಯ, ಪ್ರಾಯಶ್ಚಿತ್ತಬಲಿದ್ರವ್ಯ ಎಂಬೀ ಮಹಾಪರಿಶುದ್ಧ ಪದಾರ್ಥಗಳನ್ನು ಅಲ್ಲಿಡುತ್ತಾರೆ. ಆ ಸ್ಥಳ ಪರಿಶುದ್ಧ.</verse>
				<verse number="14">ಯಾಜಕರು ಪರಿಶುದ್ಧ ಪ್ರಾಕಾರವನ್ನು ಪ್ರವೇಶಿಸಿದ ಮೇಲೆ ಅದನ್ನು ಬಿಟ್ಟು ಹೊರಗಿನ ಪ್ರಾಕಾರಕ್ಕೆ ಹೋಗಕೂಡದು; ತಮ್ಮ ದೀಕ್ಷಾವಸ್ತ್ರಗಳನ್ನು ಅಲ್ಲೇ ತೆಗೆದಿಟ್ಟುಕೊಳ್ಳಬೇಕು, ಅವೂ ಪರಿಶುದ್ಧವಾದುವು. ಆಮೇಲೆ ಬೇರೆ ವಸ್ತ್ರಗಳನ್ನು ಹಾಕಿಕೊಂಡು ಜನಸಾಮಾನ್ಯರ ಪ್ರಾಕಾರಕ್ಕೆ ಬರುತ್ತಾರೆ,’ ಎಂದನು.</verse>
				<verse number="15">ಆ ಪುರುಷನು ಒಳಗಿನ ಮಂದಿರವನ್ನು ಅಳೆದ ನಂತರ ನನ್ನನ್ನು ಪೂರ್ವಹೆಬ್ಬಾಗಿಲ ಮಾರ್ಗವಾಗಿ ಈಚೆಗೆ ಕರೆದುತಂದು ಆಲಯವನ್ನೆಲ್ಲಾ ಸುತ್ತುಮುತ್ತಲು ಅಳೆದನು.</verse>
				<verse number="16">ಪೂರ್ವದಿಕ್ಕಿನಲ್ಲಿ ಉದ್ದಕ್ಕೂ ಅಳತೇ ಕೋಲಿನಿಂದ ಐನೂರು ಕೋಲಳೆದನು.</verse>
				<verse number="17">ಉತ್ತರ ದಿಕ್ಕಿನಲ್ಲಿ ಉದ್ದಕ್ಕೂ ಅಳತೇಕೋಲಿನಿಂದ ಐನೂರು ಕೋಲಳೆದನು.</verse>
				<verse number="18">ಪಶ್ಚಿಮ ಗೋಡೆಯ ಕಡೆಗೆ ತಿರುಗಿಕೊಂಡು ಅಳತೇಕೋಲಿನಿಂದ ಐನೂರು ಕೋಲಳೆದನು.</verse>
				<verse number="19">ದಕ್ಷಿಣ ದಿಕ್ಕಿನಲ್ಲಿ ಉದ್ದಕ್ಕೂ ಅಳತೇಕೋಲಿನಿಂದ ಐನೂರು ಕೋಲಳೆದನು.</verse>
				<verse number="20">ಆಲಯವನ್ನು ನಾಲ್ಕು ಪಾರ್ಶ್ವಗಳಲ್ಲಿಯೂ ಅಳೆದನು; ಪರಿಶುದ್ಧವಾದ ಮತ್ತು ಅಪರಿಶುದ್ಧವಾದ ಪ್ರದೇಶಗಳನ್ನು ವಿಂಗಡಿಸುವುದಕ್ಕೆ ಐನೂರಳತೇ ಕೋಲುದ್ದದ, ಐನೂರಳತೇ ಕೋಲಗಲದ ಗೋಡೆ ಸುತ್ತಮುತ್ತಲಿತ್ತು.</verse>
			</chapter>
			<chapter number="43">
				<verse number="1">ಆಮೇಲೆ ಆ ಪುರುಷ ನನ್ನನ್ನು ಪೂರ್ವದ ಬಾಗಿಲಿಗೆ ಬರಮಾಡಿದನು.</verse>
				<verse number="2">ಆಗ ಇಗೋ, ಇಸ್ರಯೇಲಿನ ದೇವರ ತೇಜಸ್ಸು ಪೂರ್ವಮಾರ್ಗವಾಗಿ ಬಂದಿತು. ಅವರ ಧ್ವನಿ ಜಲಪ್ರವಾಹದ ಘೋಷದಂತಿತ್ತು. ಅವರ ತೇಜಸ್ಸಿನಿಂದ ಭೂಮಿ ಬೆಳಗಿತು.</verse>
				<verse number="3">ಮೊದಲು ನನಗೆ ಕಂಡುಬಂದ ತೇಜಸ್ಸಿನಂತೆ ಅದು ಕಾಣಿಸಿತು. ಪಟ್ಟಣವನ್ನು ಹಾಳುಮಾಡಲು ನಾನು ಬಂದಾಗ ಎಂಥದ‍ನ್ನು ಕಂಡೆನೋ ಅಂಥದನ್ನೇ ಕಂಡೆನು. ಕೆಬಾರ್ ನದಿಯ ಹತ್ತಿರ ನನಗಾದ ಅದ್ಭುತ ದರ್ಶನದಂಥ ದರ್ಶನ ಈಗಲೂ ನನಗಾಯಿತು; ಅದನ್ನು ನೋಡಿ ಅಡ್ಡಬಿದ್ದೆ.</verse>
				<verse number="4">ಆಗ ಸರ್ವೇಶ್ವರನ ತೇಜಸ್ಸು ಪೂರ್ವಬಾಗಿಲ ಮಾರ್ಗವಾಗಿ ದೇವಸ್ಥಾನವನ್ನು ಪ್ರವೇಶಿಸಿತು.</verse>
				<verse number="5">ದೇವರಾತ್ಮ ನನ್ನನ್ನು ಎತ್ತಿ ಒಳಗಿನ ಪ್ರಾಕಾರಕ್ಕೆ ತಂದಿತು. ಆಗ ಏನಾಶ್ಚರ್ಯ! ಸರ್ವೇಶ್ವರನ ತೇಜಸ್ಸು ದೇವಸ್ಥಾನವನ್ನು ತುಂಬಿಕೊಂಡಿತ್ತು.</verse>
				<verse number="6">ದೇವಸ್ಥಾನದೊಳಗಿಂದ ನನ್ನನ್ನು ಸಂಬೋಧಿಸಿ ನುಡಿಯುವವನ ಶಬ್ದ ನನ್ನ ಕಿವಿಗೆ ಬಿದ್ದಿತು; ಆ ಪುರುಷ ನನ್ನ ಪಕ್ಕದಲ್ಲೇ ನಿಂತಿದ್ದನು.</verse>
				<verse number="7">ನುಡಿಯುವಾತನು ನನಗೆ ಹೀಗೆ ಹೇಳಿದನು: “ನರಪುತ್ರನೇ, ಇದು ನನ್ನ ಸಿಂಹಾಸನಸ್ಥಾನ, ನನ್ನ ಪಾದಸನ್ನಿಧಿ. ಇಲ್ಲಿ ನಾನು ಇಸ್ರಯೇಲರ ಮಧ್ಯೆ ಸದಾ ವಾಸಿಸುವೆನು. ಇಸ್ರಯೇಲ್ ವಂಶದವರಾಗಲಿ ಅವರ ಅರಸರಾಗಲಿ, ತಮ್ಮ ದೇವದ್ರೋಹದಿಂದ, ಗತಿಸಿದ ಅರಸರ ಶವಗಳಿಂದ ಹಾಗು</verse>
				<verse number="8">ನನ್ನ ಹೊಸ್ತಲನಿಲವುಗಳ ಪಕ್ಕದಲ್ಲಿ ತಮ್ಮ ಹೊಸ್ತಲುನಿಲವುಗಳನ್ನು ಹಾಕಿಕೊಂಡು, ನನ್ನ ಮನೆಗೂ ತಮ್ಮ ಮನೆಗೂ ಒಂದೇ ಗೋಡೆಯಾಗುವಂತೆ ಮಾಡಿಕೊಳ್ಳುವುದರಿಂದ ಇನ್ನು ನನ್ನ ಪವಿತ್ರನಾಮವನ್ನು ಅಶುದ್ಧಗೊಳಿಸರು. ಹೌದು, ಹಿಂದೆ ತಾವು ನಡೆಸಿದ ದುರಾಚಾರಗಳಿಂದ ನನ್ನ ಪವಿತ್ರನಾಮವನ್ನು ಹೊಲೆಗೆಡಿಸಿದರು; ಆದಕಾರಣ ನಾನು ಕೋಪಗೊಂಡು ಅವರನ್ನು ನಾಶಮಾಡಿದೆ.</verse>
				<verse number="9">ಈಗಲಾದರೂ ತಮ್ಮ ದೇವದ್ರೋಹವನ್ನು ಮತ್ತು ಅರಸರ ಶವಗಳನ್ನು ನನಗೆ ದೂರಮಾಡಲಿ; ಆಗ ನಾನು ಅವರ ಮಧ್ಯೆ ಸದಾ ವಾಸಿಸುವೆನು.</verse>
				<verse number="10">“ನರಪುತ್ರನೇ, ಇಸ್ರಯೇಲ್ ವಂಶದವರು ತಮ್ಮ ಅಪರಾಧಗಳ ನಿಮಿತ್ತ ನಾಚಿಕೆಪಡುವಂತೆ ದೇವಾಲಯವನ್ನು ಅವರಿಗೆ ತೋರಿಸು; ಅವರು ಅದನ್ನು ಅಳತೆಮಾಡಲಿ.</verse>
				<verse number="11">ತಾವು ನಡೆಸಿದ ದುಷ್ಕೃತ್ಯಗಳಿಗೆಲ್ಲಾ ನಾಚಿಕೆಪಟ್ಟರೆ, ನೀನು ದೇವಸ್ಥಾನದ ರೂಪ, ಅದರ ವ್ಯವಸ್ಥೆ, ಗಮನಾಗಮನ ನಿಯಮಗಳು, ಸಕಲ ರಚನಾ ವಿಧಾನಗಳು, ಸಮಸ್ತ ವಿಧಿಗಳು, ಸರ್ವನಿರ್ಮಾಣ ರೀತಿಗಳು, ಎಲ್ಲ ಕಟ್ಟಳೆಗಳು ಇವೆಲ್ಲವನ್ನು ಅವರಿಗೆ ತಿಳಿಸಿ, ಅವರು ಅದರ ಪೂರ್ಣಕ್ರಮವನ್ನೂ ಎಲ್ಲ ವಿಧಿಗಳನ್ನೂ ಅನುಸರಿಸಿ ಕೈಗೊಳ್ಳುವಂತೆ ಅವರ ಕಣ್ಣೆದುರಿಗೆ ಬರೆ.</verse>
				<verse number="12">ಇದೇ ದೇವಸ್ಥಾನದ ನಿಯಮ. ಪರ್ವತಾಗ್ರದಲ್ಲಿನ ಅದರ ಪ್ರದೇಶವೆಲ್ಲ ಸುತ್ತುಮುತ್ತಲು ಅತಿಪರಿಶುದ್ಧವಾಗಿರಬೇಕು. ಇಗೋ, ದೇವಸ್ಥಾನದ ನಿಯಮ ಇದೇ.”</verse>
				<verse number="13">ಬಲಿಪೀಠವು ಮೀಟರ್ ಅಳತೆಯ ಪ್ರಕಾರ ಹೀಗಿರಬೇಕು. ಕೆಳಭಾಗದ ಎತ್ತರ ಐವತ್ತು ಸೆಂಟಿಮೀಟರ್, ಮೇಲಿನ ಬಿಡುವಿನ ಅಗಲವು ಸುತ್ತಲೂ ಐವತ್ತು ಸೆಂಟಿಮೀಟರ್, ಬಿಡುವಿನ ತುದಿಯಲ್ಲಿ ಸುತ್ತಣ ದಿಂಡಿನ ಅಗಲವು ಇಪ್ಪತ್ತೈದು ಸೆಂಟಿಮೀಟರ್; ಇದೇ ಬಲಿವೇದಿಕೆಯ ಪೀಠ.</verse>
				<verse number="14">ನೆಲದ ಮೇಲೆ ಅಂದರೆ, ಕೆಳಭಾಗದ ಮೇಲೆ ಕೆಳಗಣ ಅಂತಸ್ತಿನ ಎತ್ತರವು ಒಂದು ಮೀಟರ್, ಅದರ ಮೇಲಣ ಬಿಡುವಿನ ಅಗಲವು ಐವತ್ತು ಸೆಂಟಿಮೀಟರ್, ಆ ಚಿಕ್ಕ ಅಂತಸ್ತಿನ ಮೇಲೆ ದೊಡ್ಡ ಅಂತಸ್ತಿನ ಎತ್ತರವು ಎರಡು ಮೀಟರ್; ಮೇಲಿನ ಬಿಡುವಿನ ಅಗಲವು ಐವತ್ತು ಸೆಂಟಿಮೀಟರ್.</verse>
				<verse number="15">ಹೋಮಕುಂಡದ ಅಂತಸ್ತಿನ ಎತ್ತರವು ಎರಡು ಮೀಟರ್; ಆ ಹೋಮಕುಂಡದ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು.</verse>
				<verse number="16">ಹೋಮಕುಂಡವು ಆರು ಮೀಟರ್ ಉದ್ದ, ಆರು ಮೀಟರ್ ಅಗಲ ಚಚ್ಚೌಕವಾಗಿರಬೇಕು.</verse>
				<verse number="17">ದೊಡ್ಡ ಅಂತಸ್ತು ಏಳು ಮೀಟರ್ ಉದ್ದವಾಗಿಯೂ ಏಳು ಮೀಟರ್ ಅಗಲವಾಗಿಯೂ ನಾಲ್ಕು ಪಾರ್ಶ್ವಗಳಲ್ಲಿ ಸಮವಾಗಿರಬೇಕು. ಸುತ್ತಣ ದಿಂಡಿನ ಅಗಲವು ಇಪ್ಪತ್ತೈದು ಸೆಂಟಿಮೀಟರ್; ಕೆಳಭಾಗದ ಸುತ್ತಣ ಅಂಚಿನ ಅಗಲವು ಐವತ್ತು ಸೆಂಟಿಮೀಟರ್; ಸೋಪಾನವು ಮೂಡಲಿಗೆ ಅಭಿಮುಖವಾಗಿರಬೇಕು.</verse>
				<verse number="18">ಆಗ ಆ ಪುರುಷ ನನಗೆ ಹೀಗೆ ಹೇಳಿದನು: “ನರಪುತ್ರನೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ದಹನಬಲಿಗೂ, ರಕ್ತವೆರಚುವ ಸಂಸ್ಕಾರಕ್ಕೂ ಬಲಿಪೀಠವನ್ನು ನಿರ್ಮಿಸುವಾಗ ಈ ವಿಧಿಗಳನ್ನು ಕೈಗೊಳ್ಳಬೇಕು.</verse>
				<verse number="19">ಲೇವಿಯರೂ, ಚಾದೋಕನ ಸಂತಾನದವರೂ ನನ್ನ ಸನ್ನಿಧಿಸೇವಕರೂ ಆದ ಯಾಜಕರಿಗೆ ನೀನು ಒಂದು ಹೋರಿಯನ್ನು ದೋಷಪರಿಹಾರಕ ಬಲಿಗಾಗಿ ಕೊಡು. ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="20">ಅದರ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬಲಿಪೀಠದ ನಾಲ್ಕು ಕೊಂಬುಗಳಿಗೆ, ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೆ ಹಾಗು ಸುತ್ತಣ ದಿಂಡಿಗೆ ಹಚ್ಚಿ ಬಲಿಪೀಠದ ದೋಷವನ್ನು ಪರಿಹರಿಸಿ, ಅದನ್ನು ಶುದ್ಧಿಮಾಡು.</verse>
				<verse number="21">ದೋಷಪರಿಹಾರಕ ಬಲಿಗಾಗಿ ವಧಿತವಾದ ಹೋರಿಯನ್ನು ಒಪ್ಪಿಸಿದಾಗ ಪವಿತ್ರಾಲಯದ ಹೊರಗೆ, ದೇವಸ್ಥಾನಕ್ಕೆ ಸಂಬಂಧಪಟ್ಟ ಗೊತ್ತಾದ ಸ್ಥಳದಲ್ಲಿ, ಅದನ್ನು ಸುಡಬೇಕು.</verse>
				<verse number="22">ಎರಡನೆಯ ದಿನದಲ್ಲಿ, ಕಳಂಕರಹಿತವಾದ ಹೋತವನ್ನು ದೋಷಪರಿಹಾರಕ ಬಲಿಗಾಗಿ ಅರ್ಪಿಸು; ಹೋರಿಯಿಂದ ಬಲಿಪೀಠವನ್ನು ಶುದ್ಧಿಮಾಡಿದಂತೆ ಹೋತದಿಂದಲೂ ಶುದ್ಧಿಮಾಡತಕ್ಕದ್ದು.</verse>
				<verse number="23">ನೀನು ಬಲಿಪೀಠದ ಶುದ್ಧೀಕಾರ್ಯವನ್ನು ಪೂರೈಸಿದ ಮೇಲೆ ಕಳಂಕರಹಿತವಾದ ಹೋರಿಯನ್ನೂ ಹಿಂಡಿನಿಂದ ತಂದ ಕಳಂಕರಹಿತ ಟಗರನ್ನೂ ಅರ್ಪಿಸು.</verse>
				<verse number="24">ನೀನು ಅವುಗಳನ್ನು ಸರ್ವೇಶ್ವರನಿಗೆ ಸಮರ್ಪಿಸಿದಾಗ ಯಾಜಕರು ಅವುಗಳ ಮೇಲೆ ಉಪ್ಪನ್ನು ಚೆಲ್ಲಿ, ಸರ್ವೇಶ್ವರನಿಗಾಗಿ ದಹನಬಲಿ ಒಪ್ಪಿಸಬೇಕು.</verse>
				<verse number="25">ಏಳು ದಿವಸ ನೀನು ದಿನದಿನವೂ ದೋಷಪರಿಹಾರಕ್ಕಾಗಿ ಒಂದೊಂದು ಹೋತವನ್ನು ಅರ್ಪಿಸು; ಯಾಜಕರು ಸಹ ಕಳಂಕರಹಿತವಾದ ಹೋರಿಯನ್ನೂ ಹಿಂಡಿನಿಂದ ತಂದ ಕಳಂಕರಹಿತವಾದ ಟಗರನ್ನೂ ಅರ್ಪಿಸಲಿ;</verse>
				<verse number="26">ಹೀಗೆ ಏಳು ದಿವಸ ಬಲಿಪೀಠದ ದೋಷವನ್ನು ಪರಿಹರಿಸುತ್ತಾ, ಅದನ್ನು ಶುದ್ಧಿಮಾಡಿ ಪ್ರತಿಷ್ಠಿಸಬೇಕು.</verse>
				<verse number="27">ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ, ಎಂಟನೆಯ ದಿನದಲ್ಲಿಯೂ ಮುಂದೆಯೂ ಯಾಜಕರು ಬಲಿಪೀಠದ ಮೇಲೆ ನಿ‍ಮ್ಮ ಪರವಾಗಿ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಬೇಕು; ಆಗ ನಾನು ನಿಮಗೆ ಪ್ರಸನ್ನನಾಗುವೆನು; ಇದು ಸರ್ವೇಶ್ವರನಾದ ದೇವರ ನುಡಿ.”</verse>
			</chapter>
			<chapter number="44">
				<verse number="1">ತರುವಾಯ ಈ ಪುರುಷನು ನನ್ನನ್ನು ಪವಿತ್ರಾಲಯದ ಪೂರ್ವದಿಕ್ಕಿನ ಹೊರಗಿನ ಹೆಬ್ಬಾಗಿಲಿಗೆ ಪುನಃ ಕರೆದುತಂದನು; ಅದು ಮುಚ್ಚಿತ್ತು.</verse>
				<verse number="2">ಆಗ ಸರ್ವೇಶ್ವರ ನನಗೆ, “ಈ ಬಾಗಿಲು ಮುಚ್ಚಿರಬೇಕು, ಇದನ್ನು ತೆರೆಯಕೂಡದು. ಇದರಿಂದ ಯಾರೂ ಪ್ರವೇಶಿಸದಿರಲಿ; ಇಸ್ರಯೇಲಿನ ದೇವರಾದ ಸರ್ವೇಶ್ವರ ಇದರಿಂದ ಪ್ರವೇಶಿಸಿದ್ದಾರೆ; ಇದು ಮುಚ್ಚೇ ಇರಬೇಕು.</verse>
				<verse number="3">ರಾಜರು ಸರ್ವೇಶ್ವರನ ಸನ್ನಿಧಿಯಲ್ಲಿ ಹವಿರ್ಭೋಜನ ಮಾಡುವುದಕ್ಕೆ ಇಲ್ಲಿ ಕುಳಿತುಕೊಳ್ಳಬಹುದು; ಅವನು ಹೆಬ್ಬಾಗಿಲ ಕೈಸಾಲೆಯ ಮಾರ್ಗವಾಗಿ ಬಂದು ಅದೇ ಮಾರ್ಗವಾಗಿ ಹೊರಡಬೇಕು,” ಎಂದು ಹೇಳಿದರು.</verse>
				<verse number="4">ಬಳಿಕ ಆ ಪುರಷನು ಉತ್ತರ ಹೆಬ್ಬಾಗಿಲ ಮಾರ್ಗವಾಗಿ ನನ್ನನ್ನು ದೇವಸ್ಥಾನದ ಮುಂದುಗಡೆಗೆ ಕರೆದುತಂದನು; ಏನಾಶ್ಚರ್ಯ! ನಾನು ನೋಡುತ್ತಿದ್ದಂತೆ ಸರ್ವೇಶ್ವರನ ತೇಜಸ್ಸು ದೇವಾಲಯವನ್ನು ತುಂಬಿಕೊಂಡಿತ್ತು; ಅದನ್ನು ನೋಡಿ ಅಡ್ಡಬಿದ್ದೆ.</verse>
				<verse number="5">ಆಗ ಸರ್ವೇಶ್ವರ ನನಗೆ ಹೀಗೆ ಹೇಳಿದರು: “ನರಪುತ್ರನೇ, ಸರ್ವೇಶ್ವರನ ಆಲಯದ ಸಕಲ ನಿಯಮ ನಿಷ್ಠೆಗಳ ವಿಷಯವಾಗಿ ನಾನು ನಿನಗೆ ಹೇಳುವುದನ್ನೆಲ್ಲಾ ನೀನು ಕಿವಿಯಾರೆ ಕೇಳಿ, ಕಣ್ಣಾರೆ ಕಂಡು, ಮನದಟ್ಟು ಮಾಡಿಕೋ; ಮತ್ತು ಪವಿತ್ರಾಲಯದ ಗಮನಾಗಮನವಿಧಿಗಳನ್ನು ಗಮನಿಸು.</verse>
				<verse number="6">“ಇದಲ್ಲದೆ, ನೀನು ಆ ದ್ರೋಹಿಗಳಿಗೆ ಅಂದರೆ, ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ: ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ:</verse>
				<verse number="7">ಇಸ್ರಯೇಲ್ ವಂಶದವರೇ, ನೀವು ನನ್ನ ಆಹಾರವಾದ ರಕ್ತಮೇದಸ್ಸುಗಳನ್ನು ಅರ್ಪಿಸುವಾಗ, ತನುಮನಗಳಲ್ಲಿ ಸುನ್ನತಿಹೀನರಾದ ಮ್ಲೇಚ್ಛರನ್ನು, ನನ್ನ ಪವಿತ್ರಾಲಯದೊಳಗೆ ಬರಮಾಡಿ ನನ್ನ ಮಂದಿರವನ್ನು ಅಶುದ್ಧಗೊಳಿಸಿದ್ದೀರಿ. ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿ ನಿಮ್ಮ ಅಮಿತ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.</verse>
				<verse number="8">ನೀವು ನನ್ನ ಪರಿಶುದ್ಧ ವಸ್ತುಗಳ ಪಾರುಪತ್ಯ ಮಾಡಲಿಲ್ಲ; ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇಮಿಸಿಕೊಂಡಿರಿ; ನಿಮ್ಮ ಅಪಾರ ದುರಾಚಾರಗಳು ಇನ್ನು ಸಾಕು.</verse>
				<verse number="9">“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ಇಸ್ರಯೇಲರಲ್ಲಿ ಸೇರಿಕೊಂಡಿರುವ ಮ್ಲೇಚ್ಛರೊಳಗೆ ತನುಮನಗಳಲ್ಲಿ ಸುನ್ನತಿಹೀನನಾದ ಯಾವನೂ ನನ್ನ ಪವಿತ್ರಾಲಯವನ್ನು ಪ್ರವೇಶಿಸಕೂಡದು.”</verse>
				<verse number="10">“ಇಸ್ರಯೇಲರು ನನ್ನನ್ನು ತೊರೆದಾಗ, ನನ್ನಿಂದಗಲಿ ತಮ್ಮ ವಿಗ್ರಹಗಳ ಕಡೆಗೆ ತಿರುಗಿಕೊಂಡು, ನನಗೆ ದೂರವಾಗಿಹೋದ ಲೇವಿಯರು ತಮ್ಮ ದೋಷಫಲವನ್ನು ಅನುಭವಿಸುವರು.</verse>
				<verse number="11">ಅವರು ನನ್ನ ಪವಿತ್ರಾಲಯದಲ್ಲಿ ಪರಿಚಾರಕರೂ ಮಂದಿರ ದ್ವಾರಪಾಲಕರೂ ಆಗಿ ಮಂದಿರದಲ್ಲಿ ಸೇವೆಮಾಡಬೇಕು; ಜನರ ಪರವಾಗಿ ದಹನ ಬಲಿಪಶುವನ್ನೂ ಶಾಂತಿಸಮಾಧಾನ ಬಲಿಪಶುವನ್ನೂ ವಧಿಸಿ ಅವರಿಗೆ ಸೇವೆಮಾಡಲು ಸಿದ್ಧರಾಗಿರಬೇಕು.</verse>
				<verse number="12">ಅವರು ತಮ್ಮ ವಿಗ್ರಹಗಳ ಮುಂದೆ ಜನರಿಗಾಗಿ ಸೇವೆಮಾಡಿ, ಇಸ್ರಯೇಲ್ ವಂಶದವರಿಗೆ ಪಾಪಕಾರಿವಿಘ್ನವಾದುದರಿಂದ, ನಾನು ಅವರ ಮೇಲೆ ಕೈಯೆತ್ತಿದ್ದೇನೆ. ಅವರು ತಮ್ಮ ದೋಷಫಲವನ್ನು ಅನುಭವಿಸಿಯೇ ತೀರಬೇಕು; ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="13">ನನಗೆ ಯಾಜಕ ಸೇವೆಮಾಡುವುದಕ್ಕೆ ಅವರು ನನ್ನ ಸನ್ನಿಧಿಗೆ ಬರಕೂಡದು. ನನ್ನ ಅತಿಪವಿತ್ರವಾದ ಪರಿಶುದ್ಧವಸ್ತುಗಳಲ್ಲಿ ಯಾವುದನ್ನೂ ಸಮೀಪಿಸಬಾರದು. ತಮಗಾದ ಅವಮಾನವನ್ನೂ ತಾವು ನಡೆಸಿದ ದುರಾಚಾರಗಳ ಫಲವನ್ನೂ ಅನುಭವಿಸುವರು.</verse>
				<verse number="14">ದೇವಾಲಯದ ಸಕಲ ಸೇವೆಯಲ್ಲೂ ಅಲ್ಲಿ ನಡೆಯುವ ಸಮಸ್ತ ಕಾರ್ಯಗಳಲ್ಲಿಯೂ ಸೇವಕ ವೃತ್ತಿಯನ್ನೇ ಅವರಿಗೆ ಕೊಡುವೆನು.</verse>
				<verse number="15">“ಆದರೆ ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದರು. ಆದ್ದರಿಂದ ಅವರು ನನ್ನ ಸೇವೆಮಾಡಲು ನನ್ನ ಸನ್ನಿಧಿಗೆ ಬರುವರು, ನನಗೆ ರಕ್ತಮೇದಸ್ಸುಗಳನ್ನು ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು; ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="16">ಅವರು ನನ್ನ ಪವಿತ್ರಾಲಯವನ್ನು ಪ್ರವೇಶಿಸಿ, ನನ್ನ ಸೇವೆ ಮಾಡುವುದಕ್ಕೆ ನನ್ನ ವೇದಿಕೆಯನ್ನು ಸಮೀಪಿಸಿ, ನನ್ನ ಆಲಯದ ಪಾರುಪತ್ಯವನ್ನು ವಹಿಸುವರು.</verse>
				<verse number="17">ಅವರು ಒಳಗಿನ ಪ್ರಾಕಾರದ ಬಾಗಿಲುಗಳನ್ನು ಪ್ರವೇಶಿಸುವಾಗ ನಾರುಮಡಿಗಳನ್ನು ಧರಿಸಿರಬೇಕು; ಒಳಗಿನ ಪ್ರಾಕಾರದ ಬಾಗಿಲುಗಳಲ್ಲೂ ದೇವಸ್ಥಾನದಲ್ಲೂ ಸೇವೆಮಾಡುತ್ತಿರುವಾಗ, ಯಾವ ಉಣ್ಣೆಯ ಉಡುಪೂ ಅವರ ಮೇಲೆ ಇರಕೂಡದು.</verse>
				<verse number="18">ಅವರು ತಲೆಗೆ ನಾರುಪೇಟವನ್ನು, ಸೊಂಟಕ್ಕೆ ನಾರುಚಡ್ಡಿಯನ್ನು ಹಾಕಿಕೊಂಡಿರಲಿ; ಬೆವರುವ ಯಾವ ಉಡುಪನ್ನೂ ಉಟ್ಟುಕೊಳ್ಳಬಾರದು.</verse>
				<verse number="19">ಅವರು ಹೊರಗಿನ ಪ್ರಾಕಾರಕ್ಕೆ ಅಂದರೆ, ಅಲ್ಲಿನ ಜನರ ಬಳಿಗೆ ಹೊರಡುವಾಗ, ತಮ್ಮ ದೀಕ್ಷಾವಸ್ತ್ರಗಳನ್ನು ಅವರಿಗೆ ತಗಲಿಸಿ ಅವರನ್ನು ಪರಿಶುದ್ಧರಾಗ ಮಾಡದಂತೆ ಕೊಠಡಿಗಳಲ್ಲಿ ಇಟ್ಟು ಬೇರೆ ವಸ್ತ್ರಗಳನ್ನು ಧರಿಸಿಕೊಳ್ಳಲಿ.</verse>
				<verse number="20">“ಅವರು ತಲೆ ಬೋಳಿಸಬಾರದು; ಕೂದಲನ್ನು ಬೆಳೆಸಬಾರದು, ಕತ್ತರಿಸಿಕೊಂಡಿರಬೇಕು.</verse>
				<verse number="21">ಒಳಗಿನ ಪ್ರಾಕಾರವನ್ನು ಪ್ರವೇಶಿಸುವಾಗ ಯಾವ ಯಾಜಕನೂ ದ್ರಾಕ್ಷಾರಸವನ್ನು ಕುಡಿದಿರಬಾರದು.</verse>
				<verse number="22">ಯಾಜಕರು ವಿಧವೆಯನ್ನಾಗಲಿ ಗಂಡನಿಂದ ಬಿಡಲಾದವಳನ್ನಾಗಲಿ ಮದುವೆಯಾಗಬಾರದು; ಆದರೆ ಇಸ್ರಯೇಲ್ ವಂಶದ ಕನ್ಯೆಯನ್ನಾಗಲಿ, ಯಾಜಕನ ವಿಧವೆಯನ್ನಾಗಲಿ ಮದುವೆಮಾಡಿಕೊಳ್ಳಲಿ.</verse>
				<verse number="23">“ಮೀಸಲಾಗಿದದ್ದಕ್ಕೂ ಮೀಸಲಲ್ಲದ್ದಕ್ಕೂ ಇರುವ ಭೇದವನ್ನು ನನ್ನ ಜನರಿಗೆ ತೋರಿಸಿ, ಶುದ್ಧಾಶುದ್ಧ ವಿವೇಚನೆಯನ್ನು ಅವರಿಗೆ ಬೋಧಿಸಲಿ.</verse>
				<verse number="24">ವ್ಯಾಜ್ಯವಾಗುವಾಗ ಅದನ್ನು ತೀರಿಸಲು ನಿಂತು, ನನ್ನ ನ್ಯಾಯವಿಧಿಗಳಿಗೆ ಅನುಸಾರವಾಗಿ ತೀರಿಸಲಿ; ನಾನು ಏರ್ಪಡಿಸಿದ ಹಬ್ಬಗಳಲ್ಲಿ ನನ್ನ ನಿಯಮನಿಷ್ಠೆಗಳನ್ನು ಕೈಕೊಂಡು ನನ್ನ ಸಬ್ಬತ್‍ಗಳನ್ನು ಜನರು ಆಚರಿಸುವಂತೆ ನೋಡಿಕೊಳ್ಳಲಿ.</verse>
				<verse number="25">“ಸತ್ತವರ ಹೆಣವನ್ನು ಸಮೀಪಿಸಿ ತಮ್ಮನ್ನೇ ಅಶುದ್ಧಮಾಡಿಕೊಳ್ಳಬಾರದು; ಆದರೆ ಸತ್ತ ತಂದೆ, ತಾಯಿ, ಮಗನು, ಮಗಳು, ತಮ್ಮ, ಮದುವೆಯಿಲ್ಲದ ತಂಗಿ, ಇವರಿಗಾಗಿ ಒಬ್ಬನು ತನ್ನನ್ನೇ ಅಶುದ್ಧಮಾಡಿಕೊಳ್ಳಬಹುದು.</verse>
				<verse number="26">ಅಂಥವನನ್ನು ಶುದ್ಧನಾದ ಮೇಲೂ, ಏಳು ದಿವಸ ಪ್ರತ್ಯೇಕಿಸಬೇಕು.</verse>
				<verse number="27">ಅವನು ಸೇವೆಮಾಡಲು ಪವಿತ್ರಾಲಯವನ್ನು ಪ್ರವೇಶಿಸಿ ಒಳಗಿನ ಪ್ರಾಕಾರಕ್ಕೆ ಬರುವ ದಿನದಲ್ಲಿ ತನ್ನ ದೋಷಪರಿಹಾರಕ್ಕಾಗಿ ಬಲಿಯನ್ನು ಅರ್ಪಿಸಬೇಕು; ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="28">“ಯಾಜಕರಿಗೆ ಇರುವ ಒಂದು ಸೊತ್ತು ಎಂದರೆ ನಾನೇ. ಇಸ್ರಯೇಲಿನಲ್ಲಿ ಅವರಿಗೆ ಯಾವ ಆಸ್ತಿಯನ್ನೂ ಕೊಡಬಾರದು. ನಾನೇ ಅವರಿಗೆ ಆಸ್ತಿ.</verse>
				<verse number="29">ಅವರು ಧಾನ್ಯ ನೈವೇದ್ಯವನ್ನೂ ದೋಷಪರಿಹಾರಕ ಬಲಿದ್ರವ್ಯವನ್ನೂ ಪ್ರಾಯಶ್ಚಿತ್ತ ಬಲಿದ್ರವ್ಯವನ್ನೂ ಅನುಭವಿಸಲಿ. ಸರ್ವೇಶ್ವರನದಾಗಿಯೇ ಇರಲೆಂದು ಇಸ್ರಯೇಲರು ಹರಕೆಮಾಡಿಕೊಡುವುದೆಲ್ಲವೂ ಅವರಿಗೆ ಸಲ್ಲಬೇಕು.</verse>
				<verse number="30">ಎಲ್ಲ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದು ಹಾಗು ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲ ಪದಾರ್ಥಗಳು ಅವರದಾಗಬೇಕು. ನಿಮ್ಮ ಮನೆ ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.</verse>
				<verse number="31">ಯಾಜಕರು ತಾನಾಗಿ ಸತ್ತುಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲಾದ ಪಕ್ಷಿಯನ್ನಾಗಲಿ, ಪ್ರಾಣಿಯನ್ನಾಗಲಿ ತಿನ್ನಬಾರದು.”</verse>
			</chapter>
			<chapter number="45">
				<verse number="1">ನೀವು ನಾಡನ್ನು ಸೊತ್ತುಸೊತ್ತಾಗಿ ಹಂಚುವಾಗ ಒಂದು ಭಾಗವನ್ನು ಮೀಸಲಾಗಿ ಪ್ರತ್ಯೇಕಿಸಿ ಸರ್ವೇಶ್ವರನಿಗೆ ಸಮರ್ಪಿಸಬೇಕು; ಅದರ ಉದ್ದ ಹನ್ನೆರಡುವರೆ ಕಿಲೋಮೀಟರ್, ಅಗಲ ಹತ್ತು ಕಿಲೋಮೀಟರ್; ಆ ಪ್ರಾಂತ್ಯವೆಲ್ಲಾ ಸುತ್ತುಮುತ್ತಲು ಪರಿಶುದ್ಧವಾಗಿ ಇರಬೇಕು.</verse>
				<verse number="2">ಇದರಲ್ಲಿ 250 ಮೀಟರ್ ಉದ್ದದ, 250 ಮೀಟರ್ ಅಗಲದ ಚಚ್ಚೌಕವಾದ ಸ್ಥಳವು ಪವಿತ್ರಾಲಯಕ್ಕೆ ನಿವೇಶನವಾಗಿರುವುದು; ಅದರ ಸುತ್ತ ಇಪ್ಪತ್ತೈದು ಮೀಟರ್ ಅಗಲ ಉಳದ ಭೂಮಿ ಇರುವುದು.</verse>
				<verse number="3">ಮೊದಲು ಅಳೆದ ಕ್ಷೇತ್ರದಲ್ಲಿ ಹನ್ನೆರಡುವರೆ ಕಿಲೋಮೀಟರ್ ಉದ್ದದ ಐದು ಕಿಲೋಮೀಟರ್ ಅಗಲದ ಒಂದು ಭಾಗವನ್ನು ಅಳೆ; ಇದರಲ್ಲಿ ಅತಿಪರಿಶುದ್ಧವಾದ ಪವಿತ್ರಾಲಯ ಇರಬೇಕು.</verse>
				<verse number="4">ಇದು ನಾಡಿನಲ್ಲೇ ಪರಿಶುದ್ಧಭಾಗ; ಇದು ಪವಿತ್ರಾಲಯದ ಅರ್ಚಕರೂ ಸರ್ವೇಶ್ವರನ ಸನ್ನಿಧಿಸೇವಕರೂ ಆದ ಯಾಜಕರಿಗೆ ಸಲ್ಲತಕ್ಕದ್ದು; ಇದು ಯಾಜಕರ ಮನೆಗಳಿಗೆ ಅಗ್ರಹಾರವಾಗಿ ಹಾಗು ಪವಿತ್ರಾಲಯಕ್ಕೆ ಪವಿತ್ರಸ್ಥಾನವಾಗಿ ಇರುವುದು.</verse>
				<verse number="5">ದೇವಾಲಯದ ಸೇವಕರಾದ ಲೇವಿಯರು ಊರುಗಳನ್ನು ಕಟ್ಟಿಕೊಂಡು ವಾಸಿಸುವಂತೆ ಹನ್ನೆರಡುವರೆ ಕಿಲೋಮೀಟರ್ ಉದ್ದದ ಐದು ಕಿಲೋಮೀಟರ್ ಅಗಲದ ಕ್ಷೇತ್ರವು ಅವರಿಗೆ ಸೊತ್ತಾಗುವುದು.</verse>
				<verse number="6">ನೀವು ಸಮರ್ಪಿಸುವ ಪರಿಶುದ್ಧಭಾಗದ ಅಕ್ಕಪಕ್ಕದಲ್ಲಿ ಎರಡುವರೆ ಕಿಲೋಮೀಟರ್ ಅಗಲದ, ಹನ್ನೆರಡುವರೆ ಕಿಲೋಮೀಟರ್ ಉದ್ದದ ಕ್ಷೇತ್ರವನ್ನು ರಾಜಧಾನಿಗೆ ಒಳಪಟ್ಟ ಭೂಮಿಯನ್ನಾಗಿ ನೇಮಿಸಬೇಕು; ಅದರಲ್ಲಿ ಇಸ್ರಯೇಲ್ ವಂಶದವರಿಗೆಲ್ಲಾ ಹಕ್ಕಿರುವುದು.</verse>
				<verse number="7">ರಾಜನ ಸೊತ್ತು ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರದ ಮತ್ತು ರಾಜಧಾನಿಗೆ ಒಳಪಟ್ಟ ಭೂಮಿಗೂ ಉಭಯ ಪಾರ್ಶ್ವಗಳಲ್ಲಿರುವುದು; ನೀವು ಮೀಸಲಾಗಿ ಸಮರ್ಪಿಸುವ ಕ್ಷೇತ್ರದ ಮತ್ತು ರಾಜಧಾನಿಗೆ ಒಳಪಟ್ಟ ಭೂಮಿಯ ಪಶ್ಚಿಮದಲ್ಲಿ ಅದು ಪಶ್ಚಿಮ ಕಡೆಗೆ ಹರಡುವುದು. ಪೂರ್ವದಲ್ಲಿ ಪೂರ್ವದ ಕಡೆಗೆ ಹರಡುವುದು. ಅದರ ಉದ್ದ ಪಶ್ಚಿಮದಿಂದ ಪೂರ್ವಕ್ಕೆ ಒಂದು ಕುಲದ ಸೊತ್ತಿನ ಉದ್ದಕ್ಕೆ ಸರಿಸಮಾನವಾಗಿರುವುದು.</verse>
				<verse number="8">ಅದು ಅವನಿಗೆ ಇಸ್ರಯೇಲಿನಲ್ಲಿ ಭೂಸೊತ್ತಾಗುವುದು; ಇನ್ನು ಮೇಲೆ ರಾಜರುಗಳು ನನ್ನ ಪ್ರಜೆಗಳನ್ನು ಹಿಂಸಿಸರು; ನಾಡಿನ ಭೂಮಿಯನ್ನು ಇಸ್ರಯೇಲರಿಗೆ ಕುಲಕುಲಕ್ಕೂ ಹಂಚುವರು.</verse>
				<verse number="9">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ::ಇಸ್ರಯೇಲಿನ ರಾಜರುಗಳೇ, ಇನ್ನು ಸಾಕು, ಸಾಕು; ಕೊಳ್ಳೆಯನ್ನೂ ಹಿಂಸಾಚಾರವನ್ನೂ ತ್ಯಜಿಸಿ ನೀತಿನ್ಯಾಯಗಳನ್ನು ನಡೆಸಿರಿ; ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿ; ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="10">ನಿಮ್ಮ ತಕ್ಕಡಿಯೂ ಧಾನ್ಯದ ಅಳತೆಯೂ ರಸದ್ರವ್ಯದ ಅಳತೆಯೂ ನ್ಯಾಯವಾಗಿಯೇ ಇರಬೇಕು.</verse>
				<verse number="11">ಏಫಾ ಎಂಬ ಧಾನ್ಯದ ಅಳತೆ ಮತ್ತು ಬತ್ ಎಂಬ ರಸದ್ರವ್ಯದ ಅಳತೆ ಒಂದೇ ಪ್ರಮಾಣವಾಗಿರತಕ್ಕದ್ದು; ಬತ್ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು, ಏಫಾ ಎಂಬುದು ಹೋಮೆರಿನ ಹತ್ತನೆಯ ಒಂದು ಪಾಲು; ಈ ಎರಡೂ ಹೋಮೆರ್ ಅಳತೆಗೆ ಸಂಬಂಧವಾಗಿರಬೇಕು.</verse>
				<verse number="12">ಒಂದು ಶೇಕೆಲ್ ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು ಅಥವಾ ಹದಿನೈದು ಶೆಕೆಲ್ ತೂಕದ್ದಾಗಿರಲಿ.</verse>
				<verse number="13">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ನೀವು ನಿಮ್ಮ ದೋಷಪರಿಹಾರಕ್ಕಾಗಿ ಧಾನ್ಯನೈವೇದ್ಯವನ್ನೂ ದಹನಬಲಿಯನ್ನೂ ಸಮಾಧಾನ ಬಲಿಯನ್ನೂ ಮಾಡುವುದಕ್ಕಾಗಿ ಸಮರ್ಪಿಸತಕ್ಕದೇನೆಂದರೆ: ಒಂದು ಹೋಮೆರ್ ಅಳತೆಯ ಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು; ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು;</verse>
				<verse number="14">ಒಂದು ಬತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗ ಎಷ್ಟಂದರೆ, ಒಂದು ಹೋಮೆರ್ ಅಳತೆಯ ಜವೆಗೋದಿಯಲ್ಲಿ ಏಫಾ ಅಳತೆಯ ಆರನೆಯ ಒಂದು ಪಾಲು; ಒಂದು ಬತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗವೆಷ್ಟೆಂದರೆ ಒಂದು ಕೋರ್ ಅಂದರೆ, ಹತ್ತು ಬತ್ ಅಥವಾ ಒಂದು ಹೋಮೆರ್ ಅಳತೆಯ ಎಣ್ಣೆಯಲ್ಲಿ ಒಂದು ಬತ್ ಅಳತೆಯ ಹತ್ತನೆಯ ಒಂದು ಪಾಲು; (ಹತ್ತು ಬತ್ ಅಂದರೆ ಒಂದು ಹೋಮೆರ್);</verse>
				<verse number="15">ಇನ್ನೂರು ಕುರಿಗಳಲ್ಲಿ ಇಸ್ರಯೇಲಿನ ನೀರಾವರಿಯ ಹುಲ್ಲುಗಾವಲಿನ ಒಂದು ಕುರಿ;</verse>
				<verse number="16">ಇವುಗಳನ್ನು ದೇಶದ ಸಕಲ ಜನರು ಇಸ್ರಯೇಲಿನ ರಾಜನಿಗೆ ಒಪ್ಪಿಸತಕ್ಕದ್ದು,</verse>
				<verse number="17">ಉತ್ಸವಗಳಲ್ಲೂ ಅಮಾವಾಸ್ಯೆಗಳಲ್ಲೂ ಸಬ್ಬತ್ತುಗಳಲ್ಲೂ ಇಸ್ರಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲೂ ದಹನಬಲಿ ಪ್ರಾಣಿ, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವುದು ರಾಜನ ಕರ್ತವ್ಯ; ಇಸ್ರಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕ ಬಲಿಪ್ರಾಣಿ, ಧಾನ್ಯನೈವೇದ್ಯ, ದಹನಬಲಿಪ್ರಾಣಿ, ಶಾಂತಿಸಮಾಧಾನ ಬಲಿಪ್ರಾಣಿ ಇವುಗಳನ್ನು ಒಪ್ಪಿಸತಕ್ಕದ್ದು.”</verse>
				<verse number="18">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಕಳಂಕರಹಿತವಾದ ಹೋರಿಯನ್ನು ಆರಿಸಿ ಅದರಿಂದ ಪವಿತ್ರಾಲಯವನ್ನು ಶುದ್ಧೀಕರಿಸಬೇಕು.</verse>
				<verse number="19">ಆಗ ಯಾಜಕನು ಆ ದೋಷಪರಿಹಾರಕ ಬಲಿಪ್ರಾಣಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ದೇವಸ್ಥಾನದ ಬಾಗಿಲ ಚೌಕಟ್ಟಿಗೂ ಬಲಿಪೀಠದ ದೊಡ್ಡ ಅಂತಸ್ತಿನ ನಾಲ್ಕು ಮೂಲೆಗಳಿಗೂ ಒಳಗಣ ಪ್ರಾಕಾರದ ಹೆಬ್ಬಾಗಿಲ ನಿಲವುಕಂಬಗಳಿಗೂ ಹಚ್ಚಬೇಕು.</verse>
				<verse number="20">ಅದೇ ಮೇರೆಗೆ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀನು ಬಲಿದಾನಮಾಡಿ ಯಾರಾದರೂ ಅಕಸ್ಮಾತ್ತಾಗಿ ಮಾಡಿದ ತಪ್ಪಿನಿಂದಾಗಲಿ, ಬುದ್ಧಿಹೀನರ ಅವಿವೇಕದಿಂದಾಗಲಿ, ದೇವಾಲಯಕ್ಕೆ ಸಂಭವಿಸಿದ ದೋಷವನ್ನೆಲ್ಲಾ ಪರಿಹರಿಸಬೇಕು.</verse>
				<verse number="21">“ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಏಳು ದಿವಸದ ಪಾಸ್ಕಹಬ್ಬವನ್ನು ಆಚರಿಸತೊಡಗಬೇಕು; ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು.</verse>
				<verse number="22">ಆ ದಿನದಲ್ಲಿ ರಾಜನು ತನ್ನ ನಿಮಿತ್ತ ಹಾಗು ನಾಡಿನ ಜನರೆಲ್ಲರ ನಿಮಿತ್ತ ದೋಷಪರಿಹಾರಕಬಲಿಗಾಗಿ ಒಂದು ಹೋರಿಯನ್ನು ಒಪ್ಪಿಸಲಿ.</verse>
				<verse number="23">ಹಬ್ಬದ ಏಳು ದಿನಗಳಲ್ಲಿಯೂ ಸರ್ವೇಶ್ವರನಿಗೆ ಸಮರ್ಪಿಸತಕ್ಕ ದಹನಬಲಿಗಾಗಿ ಅವನು ಏಳು ದಿನಗಳವರೆಗೆ ದಿನವೊಂದಕ್ಕೆ ಕಳಂಕರಹಿತವಾದ ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ಒದಗಿಸಲಿ, ಮತ್ತು ದೋಷಪರಿಹಾರಕಬಲಿಗಾಗಿ ದಿನವಹಿ ಒಂದು ಹೋತವನ್ನು ಕೊಡಲಿ.</verse>
				<verse number="24">ಇದಲ್ಲದೆ ಒಂದೊಂದು ಹೋರಿಯ ಮತ್ತು ಟಗರಿನ ಸಂಗಡ ಮೂವತ್ತು ಮೂವತ್ತು ಸೇರು ಗೋದಿಹಿಟ್ಟನ್ನೂ ಆರಾರು ಸೇರು ಎಣ್ಣೆಯನ್ನೂ ಧಾನ್ಯ ನೈವೇದ್ಯಕ್ಕಾಗಿ ಒಪ್ಪಿಸಬೇಕು.</verse>
				<verse number="25">“ಏಳನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿವಸಗಳಲ್ಲಿಯೂ ಅವನು ದೋಷಪರಿಹಾರಕಬಲಿಪ್ರಾಣಿ, ದಹನಬಲಿಪ್ರಾಣಿ, ಧಾನ್ಯನೈವೇದ್ಯ, ಎಣ್ಣೆ, ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.”</verse>
			</chapter>
			<chapter number="46">
				<verse number="1">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ವಾರದೊಳಗೆ ಕೆಲಸ ನಡೆಯುವ ಆರು ದಿವಸಗಳಲ್ಲಿ ಒಳಗಿನ ಪ್ರಾಕಾರದ ಪೂರ್ವ ಹೆಬ್ಬಾಗಿಲು ಮುಚ್ಚಿರಬೇಕು; ಆದರೆ ಸಬ್ಬತ್ ದಿನದಲ್ಲೂ ಅಮಾವಾಸ್ಯೆಯಲ್ಲೂ ತೆರೆದಿರಬೇಕು.</verse>
				<verse number="2">ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ ಬಾಗಿಲ ನಿಲವುಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ದಹನಬಲಿ ಪ್ರಾಣಿಯನ್ನು ಶಾಂತಿಸಮಾಧಾನ ಬಲಿಪ್ರಾಣಿಯನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲ ಹೊಸ್ತಿಲಿನಲ್ಲಿ ಅಡ್ಡಬೀಳಲಿ; ಆಮೇಲೆ ಹೊರಟುಹೋಗಲಿ; ಅಂದು ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.</verse>
				<verse number="3">ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲೂ ನಾಡಿನ ಜನರು ಆ ಹೆಬ್ಬಾಗಿಲ ದ್ವಾರದ ಮುಂದೆ ಸರ್ವೇಶ್ವರನ ಸಮ್ಮುಖವಾಗಿ ಅಡ್ಡಬೀಳಲಿ.</verse>
				<verse number="4">“ಸಬ್ಬತ್‍ದಿನದಲ್ಲಿ ರಾಜನು ಸರ್ವೇಶ್ವರನಿಗೆ ಕಳಂಕರಹಿತವಾದ ಆರು ಕುರಿಗಳನ್ನೂ ಕಳಂಕರಹಿತವಾದ ಒಂದು ಟಗರನ್ನೂ ದಹನಬಲಿಯಾಗಿ ಅರ್ಪಿಸತಕ್ಕದ್ದು.</verse>
				<verse number="5">ಟಗರಿನೊಡನೆ ಮೂವತ್ತು ಸೇರು ಗೋದಿಹಿಟ್ಟನ್ನೂ ಕುರಿಗಳೊಡನೆ ಸಾಧ್ಯವಿದ್ದಷ್ಟು ಗೋದಿಹಿಟ್ಟನ್ನೂ ಮೂವತ್ತು ಮೂವತ್ತು ಸೇರು ಗೋದಿಹಿಟ್ಟಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಕೊಡಲಿ.</verse>
				<verse number="6">ಅಮಾವಾಸ್ಯೆಯಲ್ಲಿ ಅವನು ಕಳಂಕರಹಿತವಾದ ಒಂದು ಹೋರಿಯನ್ನೂ ಆಡುಕುರಿಗಳನ್ನೂ ಒಂದು ಟಗರನ್ನೂ ಒಪ್ಪಿಸತಕ್ಕದ್ದು; ಅವು ಕಳಂಕರಹಿತವಾಗಿಯೇ ಇರಬೇಕು.</verse>
				<verse number="7">ಮತ್ತು ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಯೊಡನೆ ಸಾಧ್ಯವಿದ್ದಷ್ಟು ಗೋದಿಹಿಟ್ಟನ್ನೂ ಮೂವತ್ತು ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.</verse>
				<verse number="8">“ರಾಜನು ಪ್ರವೇಶಮಾಡುವಾಗ ಹೆಬ್ಬಾಗಿಲ ಕೈಸಾಲೆಯ ಮಾರ್ಗವಾಗಿ ಬಂದು ಅದೇ ಮಾರ್ಗವಾಗಿ ಹೊರಡಲಿ.</verse>
				<verse number="9">ನಾಡಿನ ಜನರಾದರೋ ಹಬ್ಬಗಳಲ್ಲಿ ಸರ್ವೇಶ್ವರನ ಸಮ್ಮುಖದಲ್ಲಿ ಕಾಣಿಸಿಕೊಳ್ಳುವಾಗ ಉತ್ತರ ಬಾಗಿಲಿಂದ ಆರಾಧಿಸುವುದಕ್ಕೆ ಪ್ರವೇಸಿಸಿದವರು ದಕ್ಷಿಣ ಬಾಗಿಲಿಂದ ಹೊರಡಲಿ; ದಕ್ಷಿಣ ಬಾಗಿಲಿಂದ ಪ್ರವೇಶಿಸಿದವನು ಉತ್ತರ ಬಾಗಿಲಿಂದ ಹಿಂದಿರುಗದೆ ಬಂದ ಮುಖವಾಗಿಯೇ ಹೋಗಲಿ.</verse>
				<verse number="10">ಜನರು ಪ್ರವೇಶಿಸುವಾಗ ರಾಜನು ಅವರ ಮಧ್ಯೆ ಪ್ರವೇಶಿಸಲಿ ಅವರು ಹೊರಡುವಾಗ ಅವನೂ ಹೊರಡಲಿ.</verse>
				<verse number="11">ರಾಜನು ಉತ್ಸವಗಳಲ್ಲೂ ಹಬ್ಬಗಳಲ್ಲೂ ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಸಾಧ್ಯವಿದ್ದಷ್ಟು ಸೇರು ಗೋದಿಹಿಟ್ಟನ್ನೂ ಮೂವತ್ತು ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.</verse>
				<verse number="12">“ರಾಜರು ಸ್ವಂತ ಇಚ್ಛೆಯಿಂದ ಕಾಣಿಕೆಯನ್ನಾಗಲಿ, ದಹನಬಲಿಯನ್ನಾಗಲಿ, ಶಾಂತಿಸಮಾಧಾನಬಲಿಗಳನ್ನಾಗಲಿ ಸರ್ವೇಶ್ವರನಿಗೆ ಸಮರ್ಪಿಸಬೇಕೆಂದಿರುವಾಗ ಅವನಿಗಾಗಿ ಪೂರ್ವಹೆಬ್ಬಾಗಿಲನ್ನು ತೆರೆಯಬೇಕು; ಅವನು ಸಬ್ಬತ್‍ದಿನದಲ್ಲಿ ಸಮರ್ಪಿಸುವಂತೆ ದಹನಬಲಿಪ್ರಾಣಿಯನ್ನೂ ಶಾಂತಿಸಮಾಧಾನ ಬಲಿಪ್ರಾಣಿಗಳನ್ನೂ ಸಮರ್ಪಿಸಿ ಹೊರಡಲಿ; ಹೊರಟ ಮೇಲೆ ಬಾಗಿಲನ್ನು ಮುಚ್ಚಬೇಕು.</verse>
				<verse number="13">“ನೀನು ಕಳಂಕರಹಿತವಾದ ಒಂದು ವರ್ಷದ ಕುರಿಯನ್ನು ಸರ್ವೇಶ್ವರನಿಗೆ ದಹನಬಲಿಯಾಗಿ ದಿನಂಪ್ರತಿ ಅರ್ಪಿಸಬೇಕು; ಪ್ರತಿದಿನ ಬೆಳಿಗ್ಗೆ ಅದನ್ನು ಅರ್ಪಿಸತಕ್ಕದ್ದು.</verse>
				<verse number="14">ಅದರೊಂದಿಗೆ ಪ್ರತಿದಿನ ಬೆಳಿಗ್ಗೆ ಧಾನ್ಯನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ ಅದನ್ನು ನೆನೆಯಿಸುವುದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು; ಇವುಗಳನ್ನು ಪ್ರತಿನಿತ್ಯವೂ ಸರ್ವೇಶ್ವರನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು; ಇದು ಶಾಶ್ವತ ನಿಯಮ.</verse>
				<verse number="15">ಯಾಜಕರು ಕುರಿಯನ್ನೂ ಧಾನ್ಯನೈವೇದ್ಯವನ್ನೂ ಎಣ್ಣೆಯನ್ನೂ ನಿತ್ಯದಹನ ಬಲಿಯಾಗಿ ಪ್ರತಿದಿನ ಬೆಳಿಗ್ಗೆ ಸಮರ್ಪಿಸಬೇಕು.”</verse>
				<verse number="16">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ರಾಜನು ತನ್ನ ಮಕ್ಕಳಲ್ಲಿ ಒಬ್ಬನಿಗೆ ಭೂದಾನ ಮಾಡಿದರೆ ಅದು ತಂದೆಯ ಸೊತ್ತಾದ ಕಾರಣ ಮಕ್ಕಳಿಗೆ ಹಕ್ಕು ಬರುವುದು, ಅದು ಬಾಧ್ಯವಾಗಿ ಸಿಕ್ಕಿದ ಸೊತ್ತೇ.</verse>
				<verse number="17">ಆದರೆ ರಾಜನು ತನ್ನ ಭೂಮಿಯ ಒಂದು ಭಾಗವನ್ನು ತನ್ನ ಸೇವಕರಲ್ಲಿ ಒಬ್ಬನಿಗೆ ದಾನಮಾಡಿದರೆ, ಬಿಡುಗಡೆಯ ವರ್ಷದವರೆಗೆ ಅದು ಅವನ ಅಧೀನವಾಗಿರುವುದು; ಆಮೇಲೆ ಅದು ಪುನಃ ರಾಜನ ವಶವಾಗುವುದು. ಆದರೆ ರಾಜನು ತನ್ನ ಮಕ್ಕಳಿಗೆ ಕೊಟ್ಟ ಸೊತ್ತು ಅವರಿಗೇ ಸೇರಿಬಿಡುವುದು.</verse>
				<verse number="18">ಇದಲ್ಲದೆ ರಾಜನು ಪ್ರಜೆಗಳ ಪಿತ್ರಾರ್ಜಿತ ಭೂಮಿಯನ್ನು ಸ್ವಾಧೀನಮಾಡಿಕೊಂಡು ಅವರ ಬಾಧ್ಯತೆಯನ್ನು ತಪ್ಪಿಸಬಾರದು. ಸ್ವಂತ ಭೂಮಿಯನ್ನೇ ವಿಭಾಗಿಸಿ ತನ್ನ ಮಕ್ಕಳಿಗೆ ಪಾಲುಕೊಡಲಿ; ಇಲ್ಲವಾದರೆ ನನ್ನ ಪ್ರಜೆಯಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಭೂಸ್ಥಿತಿಯನ್ನು ಕಳೆದುಕೊಂಡು ದಿಕ್ಕಾಪಾಲಾಗಿ ಹೋಗಬೇಕಾಗುವುದು.”</verse>
				<verse number="19">ಬಳಿಕ ಆ ಪುರುಷ ನನ್ನನ್ನು ಹೆಬ್ಬಾಗಿಲ ಪಕ್ಕದಲ್ಲಿನ ಪ್ರವೇಶದ ಮಾರ್ಗವಾಗಿ ಉತ್ತರಕ್ಕೆ ಅಭಿಮುಖನಾಗಿ ಹಾಗು ಯಾಜಕರಿಗೆ ನೇಮಕವಾಗಿ ಇರುವ ಪರಿಶುದ್ಧವಾದ ಕೋಣೆಗಳಿಗೆ ಬರಮಾಡಿದನು. ಇಗೋ, ಅವುಗಳ ಹಿಂದೆ ಪಶ್ಚಿಮದಲ್ಲಿ ಒಂದು ಸ್ಥಳವಿತ್ತು.</verse>
				<verse number="20">ಆಗ ಅವನು ನನಗೆ, “ಯಾಜಕರು ಹವಿಸ್ಸನ್ನು ಹೊರಗಣ ಪ್ರಾಕಾರಕ್ಕೆ ಒಯ್ದು ಜನರನ್ನು ಶುದ್ಧಿಮಾಡದ ಹಾಗೆ, ಪ್ರಾಯಶ್ಚಿತ್ತ ಬಲಿಪಶುವಿನ ಮತ್ತು ದೋಷಪರಿಹಾರಕ ಬಲಿಪಶುವಿನ ಮಾಂಸವನ್ನು ಬೇಯಿಸುವುದಕ್ಕೂ ಧಾನ್ಯನೈವೇದ್ಯವನ್ನು ಪಕ್ವಮಾಡುವುದಕ್ಕೂ ಈ ಸ್ಥಳ ಏರ್ಪಟ್ಟಿದೆ,” ಎಂದು ಹೇಳಿದನು.</verse>
				<verse number="21">ತರುವಾಯ ಅವನು ನನ್ನನ್ನು ಹೊರಗಿನ ಪ್ರಾಕಾರಕ್ಕೆ ಬರಮಾಡಿ ಅಲ್ಲಿನ ನಾಲ್ಕು ಮೂಲೆಗಳ ಮಾರ್ಗವಾಗಿ ಕರೆದುಕೊಂಡುಹೋದನು. ಇಗೋ, ಪ್ರಾಕಾರದ ಒಂದೊಂದು ಮೂಲೆಯಲ್ಲಿ ಒಂದೊಂದು ಒಳ ಅಂಗಳವು ಕಾಣಿಸಿತು.</verse>
				<verse number="22">ಹೌದು, ಪ್ರಾಕಾರದ ನಾಲ್ಕು ಮೂಲೆಗಳಲ್ಲೂ ಇಪ್ಪತ್ತು ಮೀಟರ್ ಉದ್ದದ, ಹದಿನೈದು ಮೀಟರ್ ಅಗಲದ ಪ್ರತ್ಯೇಕವಾದ ಅಂಗಳಗಳು ಇದ್ದವು; ಮೂಲೆಗಳಲ್ಲಿನ ಆ ನಾಲ್ಕು ಅಂಗಳಗಳು ಒಂದೇ ಅಳತೆಯಾಗಿದ್ದವು.</verse>
				<verse number="23">ಅವುಗಳೊಳಗೆ ಸುತ್ತಲು, ಅಂದರೆ ಆ ನಾಲ್ಕು ಅಂಗಳಗಳ ಸುತ್ತುಮುತ್ತಲು ಕಲ್ಲಿನ ವರಸೆಯು ಚಾಚಿಕೊಂಡಿತ್ತು; ಆ ವರಸೆಗಳ ಕೆಳಗೆ ಒಲೆಗಳು ಸುತ್ತಲೂ ಕಟ್ಟಿದ್ದವು.</verse>
				<verse number="24">ಆಗ ಅವನು ನನಗೆ, “ಇವು ದೇವಾಲಯದ ಸೇವಕರು ಬಲಿಪ್ರಾಣಿಗಳನ್ನು ತಂದ ಜನರಿಗಾಗಿ ಅವುಗಳ ಮಾಂಸವನ್ನು ಬೇಯಿಸುವ ಪಾಕಶಾಲೆಗಳು,” ಎಂದು ಹೇಳಿದನು.</verse>
			</chapter>
			<chapter number="47">
				<verse number="1">ಆಮೇಲೆ ಆ ಪುರುಷ ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದುತಂದನು; ಇಗೋ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವದಕಡೆಗೆ ಹರಿಯುತ್ತಿತ್ತು. (ದೇವಸ್ಥಾನ ಪೂರ್ವಾಭಿಮುಖವಾಗಿತ್ತು). ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಬಲಿಪೀಠದ ದಕ್ಷಿಣದಲ್ಲಿ ಹರಿಯುತ್ತಿತ್ತು.</verse>
				<verse number="2">ಆಗ ಅವನು ನನ್ನನ್ನು ಉತ್ತರ ಹೆಬ್ಬಾಗಿಲಿನಿಂದ ದೇವಾಲಯದ ಹೊರಗಿನ ಮಾರ್ಗವಾಗಿ ಸುತ್ತಿಸಿಕೊಂಡು ಪೂರ್ವದ ಹೆಬ್ಬಾಗಿಲಿಗೆ ಕರೆದುತಂದನು. ಅಲ್ಲಿ ನೋಡಲು ಅದರ ಬಲಗಡೆ ಮೆಲ್ಲಮೆಲ್ಲನೆ ಹರಿಯುವ ನೀರು ಕಾಣಿಸಿತು.</verse>
				<verse number="3">ಆ ಪುರುಷನು ಕೈಯಲ್ಲಿ ಹುರಿಯನ್ನು ಹಿಡಿದುಕೊಂಡು ಪೂರ್ವದಂಡೆಗೆ ಮುಂದುವರಿದು ಐನೂರು ಮೀಟರ್ ಅಳೆದು, ನನ್ನನ್ನು ನೀರಿನ ಆಚೆಗೆ ದಾಟಿಸುವಾಗ ಆ ನೀರು ಹೆಜ್ಜೆ ಮುಳುಗುವಷ್ಟಿತ್ತು.</verse>
				<verse number="4">ಅವನು ಪುನಃ ಐನೂರು ಮೀಟರ್ ಅಳೆದು ದಾಟಿಸುವಾಗ ಆ ನೀರು ಮೊಣಕಾಲಿನವರೆಗೆ ಇತ್ತು. ಅವನು ಮತ್ತೆ ಐನೂರು ಮೀಟರ್ ಅಳೆದು ನನ್ನನ್ನು ನೀರಿನ ಆಚೆ ದಾಟಿಸುವಾಗ ಆ ನೀರು ಸೊಂಟದವರೆಗೆ ಇತ್ತು.</verse>
				<verse number="5">ಅವನು ಮತ್ತೆ ಅಳೆದು ಐನೂರು ಮೀಟರ್ ಅಳೆದಾಗ ಅದು ನನ್ನಿಂದ ದಾಟಲಾಗದ ತೊರೆಯಾಗಿತ್ತು; ನೀರು ಏರಿ ಈಜಾಡುವಷ್ಟು ಪ್ರವಾಹವಾಗಿತ್ತು. ದಾಟಲಾಗದ ತೊರೆಯಾಗಿತ್ತು.</verse>
				<verse number="6">ಆಗ ಅವನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ?” ಎಂದು ಹೇಳಿ ನನ್ನನ್ನು ತೊರೆಯ ದಡಕ್ಕೆ ಹತ್ತಿಸಿ ಹಿಂದಿರುಗಿಸಿದನು.</verse>
				<verse number="7">ನಾನು ಹಿಂದಿರುಗಲು, ಇಗೋ, ತೊರೆಯ ಎರಡು ದಡಗಳಲ್ಲಿಯೂ ಅನೇಕಾನೇಕ ವೃಕ್ಷಗಳು ಕಾಣಿಸಿದವು.</verse>
				<verse number="8">ಆಗ ಅವನು ನನಗೆ ಹೀಗೆ ಹೇಳಿದನು: “ಈ ಪ್ರವಾಹ ಪೂರ್ವಪ್ರಾಂತ್ಯಕ್ಕೆ ಹೊರಟು ಅರಬಾ ಎಂಬ ಕಣಿವೆಗೆ ಇಳಿದು ಲವಣ ಸಮುದ್ರದ ಕಡೆಗೆ ಹರಿಯುವುದು; ದೇವಸ್ಥಾನದಿಂದ ಹೊರಟ ಪ್ರವಾಹವು ಲವಣ ಸಮುದ್ರಕ್ಕೆ ಸೇರಲು ಅದರ ನೀರು ಸಿಹಿಯಾಗುವುದು.</verse>
				<verse number="9">ಈ ತೊರೆ ಎಲ್ಲೆಲ್ಲಿ ಹರಿಯುತ್ತದೋ ಅಲ್ಲಲ್ಲಿ ಗುಂಪುಗುಂಪಾಗಿ ಚಲಿಸುವ ಸಕಲವಿಧ ಜಲಜಂತುಗಳು ಬದುಕಿ ಬಾಳುವುವು; ಮೀನುಗಳು ತಂಡೋಪ ತಂಡವಾಗಿರುವುವು. ಈ ನೀರು ಸಮುದ್ರಕ್ಕೆ ಬೀಳಲು ಆ ನೀರೂ ಸಿಹಿಯಾಗುವುದು; ಈ ತೊರೆ ಎಲ್ಲೆಲ್ಲಿ ಹರಿದರೂ ಅಲ್ಲಲ್ಲಿ ಜೀವವುಂಟಾಗುವುದು.</verse>
				<verse number="10">ಆಗ ಆ ಸಮುದ್ರದ ತೀರದಲ್ಲಿ ಬೆಸ್ತರು ನಿಂತಿರುವರು; ಏನ್‍ಗೆದಿಯಿಂದ ಏನ್ಎಗ್ಲಯಿಮಿನವರೆಗೆ ದಡವೆಲ್ಲಾ ಬಲೆಹಾಸುವ ಸ್ಥಳವಾಗುವುದು; ಬಗೆಬಗೆಯ ಮೀನುಗಳು ಮಹಾಸಾಗರದ ಮೀನುಗಳಂತೆ ಅವರಿಗೆ ರಾಶಿರಾಶಿಯಾಗಿ ಸಿಕ್ಕುವುವು.</verse>
				<verse number="11">ಆದರೆ ಅದರ ಸುತ್ತಣ ಜವುಗುನೆಲವೂ ಸವುಳುಹೊಂಡಗಳೂ ಸಿಹಿಯಾಗುವುದಿಲ್ಲ, ಅವು ಉಪ್ಪಿನ ಗಣಿಯಾಗುವುವು.</verse>
				<verse number="12">ತೊರೆಯ ಎರಡು ದಡಗಳಲ್ಲಿಯೂ ಸಕಲ ಫಲವೃಕ್ಷಗಳು ಬೆಳೆಯುವುವು. ಅವುಗಳ ಎಲೆ ಬಾಡದು, ಹಣ್ಣು ತೀರದು. ತೊರೆಯ ನೀರು ಪವಿತ್ರಾಲಯದೊಳಗಿಂದ ಹೊರಟುಬರುವ ಕಾರಣ ಅವು ತಿಂಗಳು ತಿಂಗಳಲ್ಲಿಯೂ ಹೊಸ ಹೊಸ ಫಲವನ್ನು ಕೊಡುತ್ತಲಿರುವುವು; ಅವುಗಳ ಹಣ್ಣು ಆಹಾರಕ್ಕೂ, ಸೊಪ್ಪು ಔಷಧಕ್ಕೂ ಅನುಕೂಲಿಸುವುವು.”</verse>
				<verse number="13">ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ನೀವು ಇಸ್ರಯೇಲಿನ ಹನ್ನೆರಡು ಕುಲಗಳಿಗೆ ನಾಡನ್ನು ಬಾಧ್ಯವಾಗಿ ಹಂಚಿಕೊಡುವಾಗ ಮುಂದಿನ ಮೇರೆಗಳನ್ನು ಅನುಸರಿಸಬೇಕು. ಜೋಸೆಫಿಗೆ ಎರಡು ಪಾಲು ಸೇರಲಿ.</verse>
				<verse number="14">ನಾನು ನಿಮ್ಮ ಪಿತೃಗಳಿಗೆ ಪ್ರಮಾಣವಾಗಿ ವಾಗ್ದಾನಮಾಡಿದ ಈ ನಾಡನ್ನು ನೀವೆಲ್ಲರೂ ಸರಿಸಮಾನವಾಗಿ ಅನುಭವಿಸಿರಿ; ಇದು ನಿಮಗೆ ಸೊತ್ತಾಗಿಯೇ ಇರುವುದು.</verse>
				<verse number="15">“ನಿಮ್ಮ ನಾಡಿನ ಮೇರೆಗಳು ಹೀಗಿರಬೇಕು: ಉತ್ತರದ ಮೇಲೆ ದೊಡ್ಡ ಸಮುದ್ರದಿಂದ ಆರಂಭವಾಗಿ ಚೆದಾದಿನ ದಾರಿಯಲ್ಲಿನ</verse>
				<verse number="16">ಹೆತ್ಲೋನಿನ ಮಾರ್ಗವಾಗಿ ಬಂದು ಹಮಾತ್, ಬೇರೋತ, ದಮಸ್ಕದ ಎಲ್ಲೆಗೂ ಹಮಾತಿನ ಎಲ್ಲೆಗೂ ನಡುವಣ ಸಿಬ್ರಯಿಮ್ ಎಂಬ ಊರುಗಳ ಮೇಲೆ ಹವ್ರಾನಿನ ಸರಹದ್ದಿಗೆ ಹತ್ತಿರವಾದ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.</verse>
				<verse number="17">ಹೀಗೆ ಉತ್ತರದ ಮೇರೆಯು ಸಮುದ್ರದಿಂದ, ದಮಸ್ಕದ ಸರಹದ್ದಿನಲ್ಲಿರುವ ಹಚರ್ ಐನೋನಿನವರೆಗೆ ಹಬ್ಬುವುದು; ಅದರ ಉತ್ತರದಲ್ಲಿ ಹಮಾತಿನ ಪ್ರಾಂತ್ಯವಿರುವುದು. ಇದು ಉತ್ತರ ಮೇರೆ.</verse>
				<verse number="18">“ಪೂರ್ವದಲ್ಲಿ ಹವ್ರಾನ್, ದಮಸ್ಕ, ಗಿಲ್ಯಾದ್ ಇವುಗಳಿಗೂ ಇಸ್ರಯೇಲ್ ನಾಡಿಗೂ ಮಧ್ಯೆ ಜೋರ್ಡನ್ ಹೊಳೆ ಎಲ್ಲೆಯಾಗಿರುವುದು; ಉತ್ತರದ ಮೇರೆಯಿಂದ ಪೂರ್ವದ ಸಮುದ್ರದವರೆಗೆ ನೀವು ಗುರುತುಹಾಕಿಕೊಳ್ಳಬೇಕು. ಇದು ಪೂರ್ವದಿಕ್ಕಿನ ಮೇರೆ.</verse>
				<verse number="19">“ದಕ್ಷಿಣದ ಮೇರೆ ತಾಮಾರಿನಿಂದ ಹೊರಟು ಮೆರೀಬೋತ್‍ಕಾದೇಶಿನ ಹಳ್ಳದ ಮೇಲೆ, ಈಜಿಪ್ಟಿನ ಮುಂದಿರುವ, ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟಬೇಕು. ಇದು ದಕ್ಷಿಣದ ಮೇರೆ.</verse>
				<verse number="20">“ಪಶ್ಚಿಮದಲ್ಲಿ ಉತ್ತರದ ಮೇರೆಯಿಂದ ಹಮಾತಿನ ದಾರಿಗೆ ಎದುರಿನ ಕರಾವಳಿಯ ತನಕ ದೊಡ್ಡ ಸಮುದ್ರವು ಎಲ್ಲೆಯಾಗಿರುವುದು. ಇದು ಪಶ್ಚಿಮದ ಮೇರೆ.</verse>
				<verse number="21">“ಈ ನಾಡನ್ನು, ನೀವು ಇಸ್ರಯೇಲಿನ ಕುಲಕುಲಕ್ಕೂ ಹಂಚಿಕೊಳ್ಳಬೇಕು.</verse>
				<verse number="22">ನಿಮಗೂ ನಿಮ್ಮ ಮಧ್ಯೆ ಪ್ರವಾಸಮಾಡುತ್ತಾ ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ನಾಡನ್ನು ಬಾಧ್ಯವಾಗಿ ಹಂಚಬೇಕು; ಅವರು ಇಸ್ರಯೇಲರ ಮಧ್ಯೆ ನಿಮಗೆ ಸ್ವದೇಶಿಗಳಂತೆಯೇ ಇರತಕ್ಕದ್ದು; ಇಸ್ರಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸೊತ್ತಿರಲಿ.</verse>
				<verse number="23">ಯಾವ ಕುಲದಲ್ಲಿ ವಿದೇಶಿಯು ನೆಲೆಯಾಗಿರುತ್ತಾನೋ ಅಲ್ಲಿ ಅವನಿಗೆ ಸೊತ್ತನ್ನು ಕೊಡಬೇಕು; ಇದು ಸರ್ವೇಶ್ವರನಾದ ದೇವರ ನುಡಿ.”</verse>
			</chapter>
			<chapter number="48">
				<verse number="1">ಆ ಕುಲಗಳ ಹೆಸರುಗಳು ಇವು: ನಾಡಿನ ಉತ್ತರದಲ್ಲಿ ಹಮಾತ್ ಸೀಮೆಯ ಹತ್ತಿರ ದಾನಿಗೆ ಒಂದು ಪಾಲು; ಅದರ ಉತ್ತರದ ಮೇರೆ ಹೆತ್ಲೋನಿನ ದಾರಿಯ ಪಕ್ಕದಲ್ಲಿ ಹೊರಟು ಹಮಾತಿನ ದಾರಿಯನ್ನು ದಾಟಿ ದಮಸ್ಕದ ಸರಹದ್ದಿನಲ್ಲಿರುವ ಹಚರ್ ಏನಾನಿನವರೆಗೆ ಹಬ್ಬುವುದು;</verse>
				<verse number="2">ಅದರ ಪಾರ್ಶ್ವಗಳು ನಾಡಿನ ಪೂರ್ವಪಶ್ಚಿಮಗಳ ಎಲ್ಲೆಗಳ ತನಕ ಚಾಚಿಕೊಂಡಿರುವುವು.</verse>
				<verse number="3">ದಾನಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನಫ್ತಾಲಿಗೆ ಒಂದು ಪಾಲು.</verse>
				<verse number="4">ನಫ್ತಾಲಿಯ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಮನಸ್ಸೆಗೆ ಒಂದು ಪಾಲು.</verse>
				<verse number="5">ಮನಸ್ಸೆಯ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಎಫ್ರಯಿಮಿಗೆ ಒಂದು ಪಾಲು.</verse>
				<verse number="6">ಎಫ್ರಯಿಮಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ರೂಬೇನಿಗೆ ಒಂದು ಪಾಲು.</verse>
				<verse number="7">ರೂಬೇನಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಯೆಹೂದಕ್ಕೆ ಒಂದು ಪಾಲು.</verse>
				<verse number="8">ಜುದೇಯದ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ನೀವು ಮೀಸಲಾಗಿ ಸಮರ್ಪಿಸುವ ಪಾಲು ಇರುವುದು; ಅದರ ಅಗಲ ಹನ್ನೆರಡುವರೆ ಕಿಲೋಮೀಟರ್, ಉದ್ದ ಪಶ್ಚಿಮದಿಂದ ಪೂರ್ವಕ್ಕೆ ಕುಲಗಳ ಪಾಲುಗಳ ಉದ್ದಕ್ಕೆ ಸರಿಸಮಾನ; ಅದರ ಮಧ್ಯದಲ್ಲಿ ಪವಿತ್ರಾಲಯವಿರುವುದು.</verse>
				<verse number="9">ನೀವು ಮೀಸಲು ಭೂಮಿಯಲ್ಲಿ ಸರ್ವೇಶ್ವರನಿಗೆ ವಿಶೇಷವಾದ ಮೀಸಲಾಗಿ ಸಮರ್ಪಿಸುವ ಪಾಲಿನ ಉದ್ದ ಹನ್ನೆರಡುವರೆ ಕಿಲೋಮೀಟರ್, ಅಗಲ ಐದು ಕಿಲೋಮೀಟರ್.</verse>
				<verse number="10">ಮೀಸಲಾದ ಆ ಪವಿತ್ರಕ್ಷೇತ್ರವು ಯಾಜಕರಿಗೆ ಸಲ್ಲತಕ್ಕದ್ದು. ಉತ್ತರದಲ್ಲಿ ಅದರ ಉದ್ದವು ಹನ್ನೆರಡುವರೆ ಕಿಲೋಮೀಟರ್, ಪಶ್ಚಿಮದಲ್ಲಿ ಅಗಲವು ಐದು ಕಿಲೋಮೀಟರ್, ಪೂರ್ವದಲ್ಲಿ ಅಗಲವು ಐದು ಕಿಲೋಮೀಟರ್, ಉತ್ತರದಲ್ಲಿ ಉದ್ದವು ಹನ್ನೆರಡುವರೆ ಕಿಲೋಮೀಟರ್. ಅದರ ಮಧ್ಯೆ ಸರ್ವೇಶ್ವರನ ಪವಿತ್ರಾಲಯವಿರುವುದು.</verse>
				<verse number="11">ಆ ಕ್ಷೇತ್ರ ಚಾದೋಕನ ಸಂತಾನದವರಲ್ಲಿ ನನಗಾಗಿ ಪ್ರತಿಷ್ಠಿತರು ಹಾಗು ನನ್ನ ಆಲಯದ ಪಾರುಪತ್ಯವನ್ನು ನೆರವೇರಿಸಿದವರು ಆದ ಯಾಜಕರಿಗೇ ಸೇರತಕ್ಕದ್ದು. ಇಸ್ರಯೇಲರು ನನ್ನನ್ನು ತೊರೆದಾಗ ಲೇವಿಯರೂ ತೊರೆದಂತೆ ಇವರು ತೊರೆಯಲಿಲ್ಲ.</verse>
				<verse number="12">ಲೇವಿಯರ ಪಾಲಿನ ಸರಹದ್ದಿಗೆ ಪಕ್ಕದಲ್ಲಿರುವ ಆ ಕ್ಷೇತ್ರ ಅತಿಪವಿತ್ರವೂ ನಾಡಿನಲ್ಲಿನ ಮೀಸಲಲ್ಲಿ ಮೀಸಲೂ ಆಗಿ ಯಾಜಕರದಾಗಿರುವುದು.</verse>
				<verse number="13">ಹನ್ನೆರಡುವರೆ ಕಿಲೋಮೀಟರ್ ಉದ್ದದ, ಐದು ಕಿಲೋಮೀಟರ್ ಅಗಲದ, ಒಂದು ಪಾಲು ಯಾಜಕರ ಪಾಲಿನ ಸರಹದ್ದಿಗೆ ಪಕ್ಕದಲ್ಲಿ, ಲೇವಿಯರಿಗೆ ಸಲ್ಲತಕ್ಕ; ಈ ಎರಡು ಪಾಲುಗಳ ಒಟ್ಟಳತೆ ಎಷ್ಟೆಂದರೆ ಉದ್ದ ಹನ್ನೆರಡುವರೆ ಕಿಲೋಮೀಟರ್, ಅಗಲ ಹತ್ತು ಕಿಲೋಮೀಟರ್.</verse>
				<verse number="14">ಆ ಕ್ಷೇತ್ರ ಸರ್ವೇಶ್ವರನಿಗೆ ಮೀಸಲಾದುದರಿಂದ ಅದರಲ್ಲಿ ಯಾವ ಭಾಗವನ್ನೂ ಮಾರಬಾರದು, ಅದಲುಬದಲು ಮಾಡಕೂಡದು. ನಾಡಿನ ಆ ಶ್ರೇಷ್ಠಾಂಶ ಪರರವಶವಾಗದಿರಲಿ.</verse>
				<verse number="15">ಹನ್ನೆರಡುವರೆ ಕಿಲೋಮೀಟರ್ ಉದ್ದದ ಆ ಕ್ಷೇತ್ರದ ಪಕ್ಕದಲ್ಲಿ, (ಮೀಸಲುಪಾಲಿನ ಒಟ್ಟಳತೆಯಲ್ಲಿ), ಮಿಕ್ಕ ಎರಡುವರೆ ಕಿಲೋಮೀಟರ್ ಅಗಲದ ಭೂಮಿ ಮೀಸಲಿಲ್ಲವೆಂದೆಣಿಸಿ, ರಾಜಧಾನಿಗೆ ಅಂದರೆ, ಜನರ ನಿವಾಸಕ್ಕೂ ಸುತ್ತಣ ಪ್ರದೇಶಕ್ಕೂ ಪ್ರತ್ಯೇಕವಾಗಿರಲಿ. ರಾಜಧಾನಿ ಅದರ ಮಧ್ಯದಲ್ಲಿರಲಿ.</verse>
				<verse number="16">ರಾಜಧಾನಿಯ ಅಳತೆ ಹೀಗಿರಬೇಕು: ಉತ್ತರದ ಪಕ್ಕವು 2,240 ಮೀಟರ್, ದಕ್ಷಿಣದ ಪಕ್ಕವು 2,250 ಮೀಟರ್, ಪೂರ್ವದ ಪಕ್ಕವು 2,250 ಮೀಟರ್, ಪಶ್ಚಿಮದ ಪಕ್ಕವು 2,250 ಮೀಟರ್.</verse>
				<verse number="17">ರಾಜಧಾನಿಗೆ ಸುತ್ತಣ ಪ್ರದೇಶವಿರಬೇಕು; ಅದರ ಅಗಲ ಉತ್ತರದಲ್ಲಿ 125 ಮೀಟರ್, ದಕ್ಷಿಣದಲ್ಲಿ 125 ಮೀಟರ್, ಪೂರ್ವದಲ್ಲಿ 125 ಮೀಟರ್, ಪಶ್ಚಿಮದಲ್ಲಿ 125 ಮೀಟರ್.</verse>
				<verse number="18">ರಾಜಧಾನಿ ಹೊರತು ಅದಕ್ಕೆ ಒಳಪಟ್ಟ ಮಿಕ್ಕ ಭೂಮಿಯ ಉದ್ದ ಮೀಸಲಾದ ಪವಿತ್ರಕ್ಷೇತ್ರದ ಪಕ್ಕದಲ್ಲಿ ಪೂರ್ವದ ಕಡೆ ಐದು ಕಿಲೋಮೀಟರ್, ಪಶ್ಚಿಮದ ಕಡೆ ಐದು ಕಿಲೋಮೀಟರ್. ಆ ಭೂಮಿ ಮೀಸಲಾದ ಪವಿತ್ರ ಕ್ಷೇತ್ರದ ಎಲ್ಲೆಯನ್ನು ಅನುಸರಿಸಿರುವುದು; ಅದರ ಉತ್ಪತ್ತಿಯು ಅದನ್ನು ಕೃಷಿಮಾಡುವ ಆ ಪುರನಿವಾಸಿಗಳಿಗೆ ಆಹಾರವಾಗುವುದು.</verse>
				<verse number="19">ಅವರು ಇಸ್ರಯೇಲಿನ ಯಾವ ಕುಲಕ್ಕೆ ಸೇರಿದ್ದರೂ ಪುರದಲ್ಲಿ ವಾಸಿಸುತ್ತಾ ಆ ಭೂಮಿಯನ್ನು ಕೃಷಿಮಾಡುವರು.</verse>
				<verse number="20">ಮೀಸಲಾದ ಪೂರ್ಣಕ್ಷೇತ್ರದ ಉದ್ದ ಹನ್ನೆರಡುವರೆ ಕಿಲೋಮೀಟರ್, ಅಗಲ ಹನ್ನೆರಡುವರೆ ಕಿಲೋಮೀಟರ್; ನೀವು ಮೀಸಲಾಗಿ ಅರ್ಪಿಸುವ ಪವಿತ್ರಕ್ಷೇತ್ರ ರಾಜಧಾನಿಗೆ ಒಳಪಟ್ಟ ಭೂಮಿ ಸಹಿತವಾಗಿ ಚಚ್ಚೌಕವಾಗಿರಬೇಕು.</verse>
				<verse number="21">ಮೀಸಲಾದ ಪವಿತ್ರಕ್ಷೇತ್ರದ ಮತ್ತು ರಾಜಧಾನಿಗೆ ಒಳಪಟ್ಟ ಭೂಮಿಯ ಎರಡು ಕಡೆಗಳಲ್ಲಿ ಮಿಕ್ಕ ಭೂಮಿ ರಾಜನ ಪಾಲಾಗಿರಲಿ; ಆ ಪಾಲು ಮೀಸಲಾದ ಕ್ಷೇತ್ರದ ಪೂರ್ವದ ಕಡೆ ಹನ್ನೆರಡುವರೆ ಕಿಲೋಮೀಟರ್ ಉದ್ದದ ಎಲ್ಲೆಯ ಪಕ್ಕದಲ್ಲೂ ಪೂರ್ವದ ಕಡೆ ಹನ್ನೆರಡುವರೆ ಕಿಲೋಮೀಟರ್ ಉದ್ದದ ಎಲ್ಲೆಯ ಪಕ್ಕದಲ್ಲೂ ಕುಲಗಳ ಪಾಲಿನಷ್ಟು ಉದ್ದವಾಗಿ ಹಬ್ಬುವುದು; ಅದು ರಾಜನದು; ಮೀಸಲಾದ ಪವಿತ್ರಕ್ಷೇತ್ರ ಹಾಗು ಪವಿತ್ರಾಲಯ ಅದರ ಎರಡು ಭಾಗಗಳ ಮಧ್ಯೆ ಇರುವುವು;</verse>
				<verse number="22">ರಾಜನ ಪಾಲಿನ ಎರಡು ಭಾಗಗಳ ನಡುವಣ ಲೇವಿಯರ ಪಾಲಿನ ಉತ್ತರದ ಮೇರೆಯಿಂದ ರಾಜಧಾನಿಗೆ ಒಳಪಟ್ಟ ಭೂಮಿಯ ದಕ್ಷಿಣ ಮೇರೆಯ ತನಕ ಅಂದರೆ ಯೆಹೂದ್ಯದ ದಕ್ಷಿಣ ಸರಹದ್ದಿನಿಂದ ಬೆನ್ಯಾಮೀನಿನ ಸರಹದ್ದಿನವರೆಗೆ ರಾಜನ ಪಾಲು ಹರಡಿರುವುದು.</verse>
				<verse number="23">ಮಿಕ್ಕ ಕುಲಗಳ ಪಾಲಿನ ಕ್ರಮವೇನೆಂದರೆ: ಪೂರ್ವದಿಂದ ಪಶ್ಚಿಮದ ತನಕ ಬೆನ್ಯಾಮೀನಿಗೆ ಒಂದು ಪಾಲು;</verse>
				<verse number="24">ಬೆನ್ಯಾಮೀನಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಸಿಮೆಯೋನಿಗೆ ಒಂದು ಪಾಲು;</verse>
				<verse number="25">ಸಿಮೆಯೋನಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಇಸ್ಸಾಕಾರಿಗೆ ಒಂದು ಪಾಲು;</verse>
				<verse number="26">ಇಸ್ಸಾಕಾರಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಜೆಬುಲೂನಿಗೆ ಒಂದು ಪಾಲು;</verse>
				<verse number="27">ಜೆಬುಲೂನಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಗಾದಿಗೆ ಒಂದು ಪಾಲು;</verse>
				<verse number="28">ಗಾದಿನ ತೆಂಕಣ ಸರಹದ್ದಿನಲ್ಲಿ ನಾಡಿನ ಮೇರೆಯು ತಾಮಾರಿನಿಂದ ಹೊರಟು ಮೇರೀಬತ್ ಕಾದೇಶಿನ ಹಳ್ಳವನ್ನು ದಾಟಿ ಈಜಿಪ್ಟಿನ ಮುಂದಣ ತೊರೆಯ ಮಾರ್ಗವಾಗಿ ದೊಡ್ಡ ಸಮುದ್ರಕ್ಕೆ ಮುಟ್ಟುವುದು.</verse>
				<verse number="29">ನೀವು ಇಸ್ರಯೇಲಿನ ಕುಲಗಳಿಗೆ ಸೊತ್ತಾಗಿ ಹಂಚಿಕೊಡಬೇಕಾದ ನಾಡು ಇದೇ; ಕುಲಗಳ ಪಾಲುಗಳೂ ಇವೇ; ಇದು ಸರ್ವೇಶ್ವರನಾದ ದೇವರ ನುಡಿ.</verse>
				<verse number="30">ರಾಜಧಾನಿಯ ಗಡಿಗಳು ಹೀಗಿರಬೇಕು: ಉತ್ತರದ ಗಡಿಯ ಉದ್ದ 2,250 ಮೀಟರ್;</verse>
				<verse number="31">ಪಟ್ಟಣದ ಬಾಗಿಲುಗಳಿಗೆ ಇಸ್ರಯೇಲಿನ ಕುಲಗಳ ಆಯಾ ಹೆಸರುಗಳು ಇರಲಿ; ಉತ್ತರದಲ್ಲಿ ಮೂರು ಬಾಗಿಲುಗಳು; ಒಂದು ರೂಬೇನ್ ಬಾಗಿಲು, ಇನ್ನೊಂದು ಯೆಹೂದ್ಯ ಬಾಗಿಲು, ಮತ್ತೊಂದು ಲೇವಿ ಬಾಗಿಲು.</verse>
				<verse number="32">ಪೂರ್ವದ ಗಡಿಯ ಉದ್ದ 2,250 ಮೀಟರ್; ಅದರಲ್ಲಿ ಮೂರು ಬಾಗಿಲುಗಳು; ಒಂದು ಜೋಸೆಫ್ ಬಾಗಿಲು; ಇನ್ನೊಂದು ಬೆನ್ಯಾಮೀನ್ ಬಾಗಿಲು, ಮತ್ತೊಂದು ದಾನ್ ಬಾಗಿಲು.</verse>
				<verse number="33">ದಕ್ಷಿಣದ ಗಡಿಯ ಉದ್ದ 2,250 ಮೀಟರ್; ಅದರಲ್ಲಿ ಮೂರು ಬಾಗಿಲುಗಳು; ಒಂದು ಸಿಮೆಯೋನ್ ಬಾಗಿಲು, ಇನ್ನೊಂದು ಇಸ್ಸಾಕಾರ್ ಬಾಗಿಲು, ಮತ್ತೊಂದು ಜೆಬುಲೂನ್ ಬಾಗಿಲು.</verse>
				<verse number="34">ಪಶ್ಚಿಮದ ಗಡಿಯ ಉದ್ದ 2,250 ಮೀಟರ್; ಅದರಲ್ಲಿ ಮೂರು ಬಾಗಿಲುಗಳು; ಒಂದು ಗಾದ್ ಬಾಗಿಲು, ಇನ್ನೊಂದು ಆಶೇರ್ ಬಾಗಿಲು; ಮತ್ತೊಂದು ನಫ್ತಾಲಿ ಬಾಗಿಲು.</verse>
				<verse number="35">ಪಟ್ಟಣದ ಸುತ್ತಳತೆ ಒಂಬತ್ತು ಸಾವಿರ ಮೀಟರ್‍ಗಳು. ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ‘ಸರ್ವೇಶ್ವರನ ನೆಲೆ’ ಎಂದು ಹೆಸರಾಗುವುದು.</verse>
			</chapter>
		</book>
		<book number="27">
			<chapter number="1">
				<verse number="1">ಜುದೇಯದ ಅರಸ ಯೆಹೋಯಾಕೀಮನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಬಾಬಿಲೋನಿನ ರಾಜ ನೆಬೂಕದ್ನೆಚ್ಚರನು ಜೆರುಸಲೇಮಿಗೆ ಬಂದು ಮುತ್ತಿಗೆ ಹಾಕಿದನು.</verse>
				<verse number="2">ಸರ್ವೇಶ್ವರಸ್ವಾಮಿ ಜುದೇಯದ ಅರಸ ಯೆಹೋಯಾಕೀಮನನ್ನು ಅವನ ಕೈವಶ ವಾಗುವಂತೆ ಮಾಡಿದರು. ಅಂತೆಯೇ ದೇವಾಲಯದ ಅನೇಕ ಪೂಜಾಪಾತ್ರೆಗಳು ಅವನ ಕೈವಶವಾದವು. ನೆಬೂಕದ್ನೆಚ್ಚರನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ, ತನ್ನ ದೇವರ ಮಂದಿರಕ್ಕೆ ತಂದು, ಆ ದೇವರ ಭಂಡಾರಕ್ಕೆ ಸೇರಿಸಿಕೊಂಡನು.</verse>
				<verse number="3">ಅನಂತರ ಆ ರಾಜನು ತನ್ನ ಕಂಚುಕಿಯರಲ್ಲಿ ಮುಖ್ಯಸ್ಥನಾದ ಅಶ್ಪೆನಜನಿಗೆ, “ನೀನು ಇಸ್ರಯೇಲರಲ್ಲಿ, ಅಂದರೆ ರಾಜವಂಶೀಯರಲ್ಲಿ ಮತ್ತು ಪ್ರಧಾನರಲ್ಲಿ ಕೆಲವು ಯುವಕರನ್ನು ಇಲ್ಲಿಗೆ ಕರೆದು ಬಾ.</verse>
				<verse number="4">ಅವರು ಅಂಗದೋಷವಿಲ್ಲದವರಾಗಿರಬೇಕು. ಸುಂದರರು, ಸಮಸ್ತ ಶಾಸ್ತ್ರಜ್ಞರು, ಪಂಡಿತರು, ವಿದ್ಯಾನಿಪುಣರು, ರಾಜಾಲಯದಲ್ಲಿ ಸನ್ನಿಧಿಸೇವೆಮಾಡಲು ಸಮರ್ಥರೂ ಆಗಿರಬೇಕು. ಅವರಿಗೆ ಬಾಬಿಲೋನ್ ಪಂಡಿತರ ಭಾಷೆಯನ್ನೂ ಶಾಸ್ತ್ರಗಳನ್ನೂ ಕಲಿಸಬೇಕು,” ಎಂದು ಅಪ್ಪಣೆಕೊಟ್ಟನು.</verse>
				<verse number="5">ಇದಲ್ಲದೆ, “ಇನ್ನು ಮುಂದಕ್ಕೆ ಅವರು ಸನ್ನಿಧಿಸೇವಕರಾಗುವಂತೆ, ನನ್ನ ಭೋಜನಪದಾರ್ಥಗಳನ್ನು ಹಾಗೂ ನಾನು ಕುಡಿಯುವ ದ್ರಾಕ್ಷಾರಸವನ್ನು ಅವರಿಗೆ ಪ್ರತಿದಿನ ಬಡಿಸುವ ಏರ್ಪಾಡುಮಾಡಿ ಅವರನ್ನು ಮೂರು ವರ್ಷ ಪೋಷಿಸಬೇಕು,” ಎಂದು ಆಜ್ಞಾಪಿಸಿದನು.</verse>
				<verse number="6">ಹೀಗೆ ಆರಿಸಿಕೊಂಡ ಯುವಕರಲ್ಲಿ ದಾನಿಯೇಲನು, ಹನನ್ಯನು, ಮಿಶಾಯೇಲನು, ಅಜರ್ಯನು ಎಂಬ ಯೆಹೂದ್ಯರು ಸೇರಿದ್ದರು.</verse>
				<verse number="7">ಕಂಚುಕಿಯರ ನಾಯಕನು ಇವರಿಗೆ ನಾಮಕರಣಮಾಡಿ ದಾನಿಯೇಲನಿಗೆ ‘ಬೇಲ್ತೆಶಚ್ಚರ್’, ಹನನ್ಯನಿಗೆ ‘ಶದ್ರಕ್’, ಮಿಶಾಯೇಲನಿಗೆ ‘ಮೇಶಕ್’, ಹಾಗೂ ಅಜರ್ಯನಿಗೆ ‘ಅಬೇದ್‍ನೆಗೋ’, ಎಂಬ ಹೆಸರಿಟ್ಟನು.</verse>
				<verse number="8">ಆದರೆ ದಾನಿಯೇಲನು ತಾನು ರಾಜನ ಭೋಜನ ಪದಾರ್ಥಗಳನ್ನು ತಿಂದು ಹಾಗೂ ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನೇ ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿಕೊಂಡನು. ಕಂಚುಕಿಯರ ನಾಯಕನಿಗೆ, “ಕ್ಷಮಿಸು, ನಾನು ಅಶುದ್ಧನಾಗಲಾರೆ,” ಎಂದು ವಿನಂತಿಸಿದನು.</verse>
				<verse number="9">ಕಂಚುಕಿಯರ ನಾಯಕನು ದಾನಿಯೇಲನ ಮೇಲೆ ಕನಿಕರ ಮತ್ತು ದಯೆತೋರುವಂತೆ ದೇವರು ಅನುಗ್ರಹಿಸಿದ್ದರು.</verse>
				<verse number="10">ಆದುದರಿಂದ ಆ ನಾಯಕನು ದಾನಿಯೇಲನಿಗೆ, “ನಿಮಗೆ ಅನ್ನಪಾನಗಳನ್ನು ಏರ್ಪಡಿಸಿದ ನನ್ನೊಡೆಯನಾದ ರಾಜನು ನಿಮ್ಮಂತೆ ಆಯ್ಕೆಯಾದ ಯುವಕರ ಮುಖಕ್ಕಿಂತ ನಿಮ್ಮ ಮುಖ ಬಾಡಿರುವುದನ್ನು ನೋಡಿ ನನ್ನ ತಲೆ ತೆಗೆಸಬಹುದೆಂಬ ಭಯ ನನಗಿದೆ. ಇದಕ್ಕೆ ನೀವು ಕಾರಣರಾಗಬಹುದಲ್ಲವೆ?” ಎಂದು ಹೇಳಿದನು.</verse>
				<verse number="11">ದಾನಿಯೇಲನು ತನ್ನನ್ನೂ, ಹನನ್ಯ, ಮಿಶಾಯೇಲ, ಅಜರ್ಯ ಇವರನ್ನೂ ನೋಡಿಕೊಳ್ಳಲು ಆ ನಾಯಕನು ನೇಮಿಸಿದ್ದ ವಿಚಾರಕನ ಬಳಿಗೆ ಬಂದು,</verse>
				<verse number="12">“ಅಯ್ಯಾ, ಹತ್ತು ದಿನಗಳ ಮಟ್ಟಿಗೆ ನಮ್ಮನ್ನು ಪರೀಕ್ಷಿಸಿನೋಡು. ಸೇವಕರಾದ ನಮಗೆ ಭೋಜನಕ್ಕೆ ಬದಲಾಗಿ ಕಾಯಿಪಲ್ಯ, ಪಾನಕ್ಕೆ ಬದಲಾಗಿ ನೀರು ಒದಗಿಸಿದರೆ ಸಾಕು.</verse>
				<verse number="13">ಆಮೇಲೆ ನಮ್ಮ ಮುಖಗಳನ್ನೂ ರಾಜಭೋಜನ ಉಣ್ಣುವ ಯುವಕರ ಮುಖಗಳನ್ನೂ ಹೋಲಿಸಿನೋಡು. ಅನಂತರ ನಿನಗೆ ತೋಚಿದ ಹಾಗೆ ನಮಗೆ ಮಾಡು,” ಎಂದು ಕೇಳಿಕೊಂಡನು.</verse>
				<verse number="14">ವಿಚಾರಕನು ಅವರ ಬಿನ್ನಹಕ್ಕೆ ಒಪ್ಪಿ ಹತ್ತು ದಿನದವರೆಗೆ ಪರೀಕ್ಷಿಸಿದನು.</verse>
				<verse number="15">ಹತ್ತು ದಿನಗಳಾದ ಮೇಲೆ ರಾಜಭೋಜನ ಉಣ್ಣುತ್ತಿದ್ದ ಎಲ್ಲ ಯುವಕರಿಗಿಂತ ಇವರು ಸುಂದರವಾಗಿಯೂ ಪುಷ್ಟರಾಗಿಯೂ ಕಾಣಿಸಿದರು.</verse>
				<verse number="16">ಅಂದಿನಿಂದ ವಿಚಾರಕನು ಇವರಿಗೆ ನೇಮಕವಾದ ಭೋಜನಪದಾರ್ಥಗಳನ್ನೂ ಕುಡಿಯಬೇಕಾದ ದ್ರಾಕ್ಷಾರಸವನ್ನೂ ತೆಗೆದುಬಿಟ್ಟು ಕಾಯಿಪಲ್ಯಗಳನ್ನೇ ಕೊಡುತ್ತಾ ಬಂದನು.</verse>
				<verse number="17">ಹೀಗಿರಲು ದೇವರು ಆ ನಾಲ್ಕುಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲೂ ವಿದ್ಯೆಗಳಲ್ಲೂ ಜ್ಞಾನ ವಿವೇಕಗಳನ್ನು ದಯಪಾಲಿಸಿದರು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಅರ್ಥೈಸುವುದರಲ್ಲಿ ಪ್ರವೀಣನಾದನು.</verse>
				<verse number="18">ರಾಜನು ನೇಮಿಸಿದ ಕಾಲವು ಕಳೆಯಿತು. ಆ ಯುವಕರನ್ನು ರಾಜಸನ್ನಿಧಿಗೆ ಕರೆದುತರುವ ಸಮಯವು ಬಂದಿತು. ಕಂಚುಕಿಯರ ನಾಯಕ ಅವರನ್ನು ನೆಬೂಕದ್ನೆಚ್ಚರನ ಸಮ್ಮುಖಕ್ಕೆ ಕರೆದುತಂದನು.</verse>
				<verse number="19">ರಾಜನು ಅವರ ಸಂಗಡ ಮಾತಾಡುವಾಗ ಅಲ್ಲಿದ್ದ ಯುವಕರಲ್ಲೆಲ್ಲ ದಾನಿಯೇಲನಿಗೆ, ಹನನ್ಯನಿಗೆ, ಮೀಶಾಯೇಲನಿಗೆ, ಅಜರ್ಯನಿಗೆ, ಸಮಾನರು ಯಾರೂ ಕಂಡುಬರಲಿಲ್ಲ. ಆದಕಾರಣ ಆ ನಾಲ್ವರು ಸನ್ನಿಧಿಸೇವಕರಾದರು.</verse>
				<verse number="20">ಬಳಿಕ ರಾಜನು ಶಾಸ್ತ್ರೀಯ ವಿದ್ಯೆಯ ಎಲ್ಲ ವಿಷಯಗಳಲ್ಲಿ ಅವರನ್ನು ವಿಚಾರಮಾಡಿದಾಗ ಸಮಸ್ತರಾಜ್ಯದಲ್ಲಿನ ಎಲ್ಲ ಜೋಯಿಸರಿಗಿಂತಲೂ ಮಂತ್ರವಾದಿಗಳಿಗಿಂತಲೂ ಹತ್ತರಷ್ಟು ನಿಪುಣರಾಗಿ ಕಂಡುಬಂದರು.</verse>
				<verse number="21">ದಾನಿಯೇಲನು ರಾಜ ಸೈರೆಷನ ಆಳ್ವಿಕೆಯ ಮೊದಲನೆಯ ವರ್ಷದ ತನಕ ಸನ್ನಿಧಿಸೇವಕನಾಗಿಯೇ ಇದ್ದನು.</verse>
			</chapter>
			<chapter number="2">
				<verse number="1">ನೆಬೂಕದ್ನೆಚ್ಚರನು ತನ್ನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಒಂದು ಕನಸು ಕಂಡು ತತ್ತರಗೊಂಡನು. ಅವನಿಗೆ ನಿದ್ರೆ ತಪ್ಪಿತು.</verse>
				<verse number="2">ಆಗ ಆ ರಾಜನು ತನ್ನ ಕನಸಿನ ಅರ್ಥ ತಿಳಿಸಬೇಕೆಂದು ಜೋಯಿಸರನ್ನೂ ಮಂತ್ರವಾದಿಗಳನ್ನೂ ಮಾಟಗಾರರನ್ನೂ ಪಂಡಿತರನ್ನೂ ಕರೆಯಿಸಿದನು. ಅವರು ಆಸ್ಥಾನಕ್ಕೆ ಬಂದು ರಾಜನ ಮುಂದೆ ನಿಂತುಕೊಂಡರು.</verse>
				<verse number="3">ರಾಜನು ಅವರಿಗೆ, “ನಾನು ಒಂದು ಕನಸು ಕಂಡೆ. ಅದರ ಅರ್ಥವೇನೋ ಎಂದು ನನ್ನ ಮನಸ್ಸು ತತ್ತರಗೊಂಡಿದೆ,” ಎಂದನು.</verse>
				<verse number="4">ಆ ಪಂಡಿತರು ಅರಮೀಯ ಭಾಷೆಯಲ್ಲಿ ರಾಜನಿಗೆ, “ಅರಸರೇ, ಚಿರಂಜೀವಿಯಾಗಿರಿ! ಆ ಕನಸನ್ನು ನಿಮ್ಮ ದಾಸರಾದ ನಮಗೆ ಹೇಳಿ. ಅದರ ತಾತ್ಪರ್ಯವನ್ನು ತಿಳಿಸುತ್ತೇವೆ,” ಎಂದು ಅರಿಕೆಮಾಡಿದರು.</verse>
				<verse number="5">ಆಗ ರಾಜನು ಆ ಪಂಡಿತರಿಗೆ, “ನನ್ನ ಈ ಮಾತು ಖಂಡಿತ; ನೀವು ಈ ಕನಸನ್ನೂ ಅದರ ಉದ್ದೇಶವನ್ನೂ ನನಗೆ ತಿಳಿಸದಿದ್ದರೆ ನಿಮ್ಮನ್ನು ತುಂಡುತುಂಡಾಗಿ ಕತ್ತರಿಸುವೆನು; ನಿಮ್ಮ ಮನೆಗಳನ್ನು ತಿಪ್ಪೆಗುಂಡಿಯನ್ನಾಗಿಸುವೆನು.</verse>
				<verse number="6">ನೀವು ಆ ಕನಸನ್ನೂ ಅದರ ಉದ್ದೇಶವನ್ನೂ ತಿಳಿಸಿದ್ದೇ ಆದರೆ ನನ್ನಿಂದ ನಿಮಗೆ ದಾನ ಬಹುಮಾನಗಳೂ ವಿಶೇಷ ಸನ್ಮಾನಗಳೂ ದೊರಕುವುವು. ಆದಕಾರಣ ಆ ಕನಸನ್ನೂ ಅದರ ಉದ್ದೇಶವನ್ನೂ ನನಗೆ ತಿಳಿಸಿ,” ಎಂದನು.</verse>
				<verse number="7">ಪಂಡಿತರು, “ರಾಜರು ತಮ್ಮ ದಾಸರಿಗೆ ಕನಸನ್ನು ತಿಳಿಸೋಣವಾಗಲಿ, ನಾವು ಅದರ ತಾತ್ಪರ್ಯವನ್ನು ವಿವರಿಸುವೆವು,” ಎಂದು ಮತ್ತೊಮ್ಮೆ ಉತ್ತರಕೊಟ್ಟರು.</verse>
				<verse number="8">ಅದಕ್ಕೆ ರಾಜನು, “ನೀವು ಆ ಕನಸನ್ನು ನನಗೆ ತಿಳಿಸದಿದ್ದರೆ ನಿಮಗೆ ಮರಣದಂಡನೆಯಾಗುವುದು ಖಚಿತವೆಂದು ತಿಳಿದೇ ಕಾಲಹರಣ ಮಾಡುತ್ತಿದ್ದೀರಿ. ಇದು ನನಗೆ ಚೆನ್ನಾಗಿ ಗೊತ್ತು.</verse>
				<verse number="9">ಕಾಲ ಬದಲಾಗುತ್ತಿರುತ್ತದೆ ಎಂದುಕೊಂಡೇ ನನ್ನ ಮುಂದೆ ಇಲ್ಲಸಲ್ಲದ್ದನ್ನು ಆಡಲು ಒಪ್ಪಂದ ಮಾಡಿಕೊಂಡಿದ್ದೀರಿ. ಅಂತು ಆ ಕನಸನ್ನು ನೀವು ನನಗೆ ತಿಳಿಸಲೇಬೇಕು. ಆಗ ಅದರ ಉದ್ದೇಶವನ್ನು ವಿವರಿಸಬಲ್ಲಿರೆಂದು ನಾನು ತಿಳಿದುಕೊಳ್ಳುವೆನು,” ಎಂದು ಹೇಳಿದನು.</verse>
				<verse number="10">ಆಗ ಆ ಪಂಡಿತರು ಸನ್ನಿಧಿಯ ಮುಂದೆ, “ರಾಜರು ಕೇಳುವ ಸಂಗತಿಯನ್ನು ತಿಳಿಸಬಲ್ಲವನು ಈ ಲೋಕದಲ್ಲಿ ಯಾವನೂ ಇಲ್ಲ. ಎಷ್ಟೆಷ್ಟೋ ಬಲಿಷ್ಠರಾದ, ಪ್ರಬಲರಾದ ಯಾವ ಅರಸರೂ ಜೋಯಿಸನನ್ನಾಗಲಿ, ಮಾಟಗಾರನನ್ನಾಗಲಿ, ಪಂಡಿತನನ್ನಾಗಲಿ, ಇಂಥ ಸಂಗತಿಯನ್ನು ಎಂದೂ ಕೇಳಿದ್ದಿಲ್ಲ.</verse>
				<verse number="11">ರಾಜರು ಕೇಳುತ್ತಿರುವ ಸಂಗತಿ ಅತಿಕಷ್ಟವಾದುದು. ನರಮಾನವರ ನಡುವೆ ವಾಸಮಾಡದ ದೇವರುಗಳೇ ಹೊರತು ಇನ್ನಾರೂ ರಾಜರ ಸಮ್ಮುಖದಲ್ಲಿ ಇದನ್ನು ತಿಳಿಸಲಾರರು,” ಎಂದು ಉತ್ತರಕೊಟ್ಟರು.</verse>
				<verse number="12">ಇದನ್ನು ಕೇಳಿ ರಾಜನು ಉಗ್ರಕೋಪಗೊಂಡನು. ಬಾಬಿಲೋನಿನ ಸಕಲ ವಿದ್ವಾಂಸರನ್ನು ಕೊಲ್ಲಬೇಕೆಂದು ಆಜ್ಞಾಪಿಸಿದನು.</verse>
				<verse number="13">ಕೂಡಲೆ ಆ ಆಜ್ಞೆ ಹೊರಪಟ್ಟಿತು. ವಿದ್ವಾಂಸರು ಪ್ರಾಣಾಪಾಯಕ್ಕೆ ಗುರಿಯಾದರು. ಅಂತೆಯೇ ದಾನಿಯೇಲನನ್ನೂ ಅವನ ಗೆಳೆಯರೆಲ್ಲರನ್ನೂ ಕೊಲ್ಲಲಿಕ್ಕೆ ಹುಡುಕಿದರು.</verse>
				<verse number="14">ರಾಜನ ಮೈಗಾವಲಿನವರ ದಳವಾಯಿಯಾದ ಅರ್ಯೋಕನು ಬಾಬಿಲೋನಿನ ವಿದ್ವಾಂಸರ ಸಂಹಾರಕ್ಕಾಗಿ ಹೊರಟಾಗ ದಾನಿಯೇಲನು ಬುದ್ಧಿವಿವೇಕಗಳಿಂದ ಅವನ ಸಂಗಡ ಮಾತಾಡಿದನು.</verse>
				<verse number="15">“ಈ ರಾಜಾಜ್ಞೆಯೇಕೆ ಇಷ್ಟು ತೀಕ್ಷ್ಣ?” ಎಂದು ಕೇಳಿದನು. ಅರ್ಯೋಕನು ನಡೆದ ಸಂಗತಿಯನ್ನು ದಾನಿಯೇಲನಿಗೆ ತಿಳಿಸಿದನು.</verse>
				<verse number="16">ಆಮೇಲೆ ದಾನಿಯೇಲನು ಅರಮನೆಗೆ ಹೋಗಿ, “ನನಗೆ ಸಮಯಕೊಟ್ಟರೆ ಆ ಕನಸಿನ ಅರ್ಥವನ್ನು ರಾಜರಿಗೆ ನಾನು ವಿವರಿಸಬಲ್ಲೆ,” ಎಂದು ಅರಿಕೆ ಮಾಡಿದನು.</verse>
				<verse number="17">ಬಳಿಕ ದಾನಿಯೇಲನು ತನ್ನ ಮನೆಗೆ ಹಿಂತಿರುಗಿ ಹನನ್ಯ, ಮೀಶಾಯೇಲ ಮತ್ತು ಅಜರ್ಯ ಎಂಬ ತನ್ನ ಗೆಳೆಯರಿಗೆ ಈ ಸಮಾಚಾರ ತಿಳಿಸಿದನು.</verse>
				<verse number="18">“ನಾವು ಬಾಬಿಲೋನಿನ ಇತರ ವಿದ್ವಾಂಸರೊಂದಿಗೆ ನಾಶವಾಗದಂತೆ ಪರಲೋಕ ದೇವರು ಈ ರಹಸ್ಯದ ವಿಷಯವಾಗಿ ಕೃಪೆತೋರುವಂತೆ ಬೇಡಿಕೊಳ್ಳೋಣ,” ಎಂದು ಹೇಳಿದನು.</verse>
				<verse number="19">ಆ ರಾತ್ರಿಯೇ ಸ್ವಪ್ನದಲ್ಲಿ ಕನಸಿನ ಗುಟ್ಟು ದಾನಿಯೇಲನಿಗೆ ವ್ಯಕ್ತವಾಯಿತು. ಕೂಡಲೆ ಆತನು ಪರಲೋಕ ದೇವರನ್ನು ಹೀಗೆಂದು ಸ್ತುತಿಸಿದನು:</verse>
				<verse number="20">ಯುಗಯುಗಾಂತರಕ್ಕೂ ದೇವರ ನಾಮಕ್ಕೆ ಸ್ತುತಿಸ್ತೋತ್ರ! ಏಕೆಂದರೆ ಜ್ಞಾನವೂ ಶಕ್ತಿಯೂ ಆತನಿಗೆ ಸ್ವಂತ.</verse>
				<verse number="21">ಕಾಲಗಳು ಋತುಗಳು ಆತನ ಕೈಯಲ್ಲಿವೆ ರಾಜರನ್ನು ಕೆಳಕ್ಕಿಳಿಸುವವನು, ಮೇಲೆ ನಿಲ್ಲಿಸುವವನು ಆತನೆ. ಜ್ಞಾನಿಗಳ ಜ್ಞಾನ, ವಿವೇಕಿಗಳ ವಿವೇಕ ಆತನ ಕೊಡುಗೆ.</verse>
				<verse number="22">ಅಗಾಧ ವಿಷಯಗಳನ್ನೂ ನಿಗೂಢ ರಹಸ್ಯಗಳನ್ನೂ ತರುವನಾತ ಬಯಲಿಗೆ. ಕಗ್ಗತ್ತಲೆಯಲ್ಲಿ ಅಡಗಿರುವುದೂ ಆತನಿಗೆ ಗೋಚರ ಏಕೆಂದರೆ ಬೆಳಕು ಆತನಲ್ಲೇ ಸುಸ್ಥಿರ.</verse>
				<verse number="23">ನನ್ನ ಪಿತೃಗಳ ದೇವಾ, ಮಾಡುವೆ ನಿನ್ನ ಗುಣಗಾನ, ನಿನಗೆ ನನ್ನ ಧನ್ಯವಾದ. ಏಕೆಂದರೆ ನೀನೇ ನನಗೆ ಜ್ಞಾನಶಕ್ತಿಗಳನ್ನು ದಯಪಾಲಿಸಿದಾತ. ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದಾತ ನೀನೇ ಹೌದು, ರಾಜ ಬಯಸಿದ ಗುಟ್ಟನ್ನು ನಮಗೆ ವ್ಯಕ್ತಪಡಿಸಿದಾತ ನೀನೇ.</verse>
				<verse number="24">ತರುವಾಯ ದಾನಿಯೇಲನು ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲುವುದಕ್ಕೆ ರಾಜನು ನೇಮಿಸಿದ್ದ ಅರ್ಯೋಕನ ಬಳಿಗೆ ಹೋದನು. ಅವನಿಗೆ, “ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲಬೇಡ. ನನ್ನನ್ನು ರಾಜನ ಸನ್ನಿಧಿಗೆ ಸೇರಿಸಿಬಿಡು, ನಾನು ಆ ಕನಸಿನ ಉದ್ದೇಶವನ್ನು ರಾಜನಿಗೆ ತಿಳಿಸುವೆನು,” ಎಂದು ಕೇಳಿಕೊಂಡನು.</verse>
				<verse number="25">ಕೂಡಲೆ ಅರ್ಯೋಕನು ದಾನಿಯೇಲನನ್ನು ರಾಜನ ಸನ್ನಿಧಿಗೆ ಬೇಗಬೇಗನೆ ಕರೆದುಕೊಂಡು ಬಂದನು. “ರಾಜರೇ, ಆ ಕನಸಿನ ಉದ್ದೇಶವನ್ನು ನಿಮಗೆ ತಿಳಿಸಬಲ್ಲ ಒಬ್ಬನು ನನಗೆ ಸಿಕ್ಕಿದ್ದಾನೆ. ಅವನು ಜುದೇಯದಿಂದ ಸೆರೆಯಾಳಾಗಿ ತಂದವರಲ್ಲಿ ಒಬ್ಬನಾಗಿದ್ದಾನೆ,” ಎಂದು ಅರಿಕೆಮಾಡಿದನು.</verse>
				<verse number="26">ರಾಜನು ಬೇಲ್ತೆಶಚ್ಚರನೆಂದು ಹೆಸರು ಪಡೆದಿದ್ದ ದಾನಿಯೇಲನನ್ನು ನೋಡಿ, “ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ತಿಳಿಸಬಲ್ಲೆಯಾ?” ಎಂದು ವಿಚಾರಿಸಿದನು.</verse>
				<verse number="27">ಅದಕ್ಕೆ ದಾನಿಯೇಲನು ಸನ್ನಿಧಿಯಲ್ಲಿ, “ರಾಜರು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ತಿಳಿಸಲಾರರು.</verse>
				<verse number="28">ಆದರೆ ರಹಸ್ಯಗಳನ್ನು ವ್ಯಕ್ತಪಡಿಸಬಲ್ಲವರು ಒಬ್ಬರಿದ್ದಾರೆ. ಅವರೇ ಪರಲೋಕದಲ್ಲಿರುವ ದೇವರು. ಬರಲಿರುವ ಕಾಲದಲ್ಲಿ ನಡೆಯತಕ್ಕದ್ದನ್ನು ರಾಜ ನೆಬೂಕದ್ನೆಚ್ಚರರಾದ ನಿಮಗೆ ಅವರೇ ತಿಳಿಯಪಡಿಸಿದ್ದಾರೆ. ನೀವು ಕಂಡ ಕನಸು, ಹಾಸಿಗೆಯ ಮೇಲೆ ಮಲಗಿದ್ದಾಗ ನಿಮ್ಮ ಮನಸ್ಸಿಗೆ ತೋಚಿದ ಸ್ವಪ್ನಗಳು ಹೀಗಿವೆ:</verse>
				<verse number="29">“ರಾಜರೇ, ನೀವು ಹಾಸಿಗೆಯ ಮೇಲೆ ಮಲಗಿರುವಾಗ ಮುಂದೆ ಏನು ಸಂಭವಿಸುವುದೋ ಎಂಬ ಯೋಚನೆ ನಿಮ್ಮಲ್ಲಿ ಹುಟ್ಟಿತ್ತು. ಗುಟ್ಟುಗಳನ್ನು ಬಟ್ಟಬಯಲಾಗಿಸುವಾತ ಮುಂದೆ ಸಂಭವಿಸುವುದನ್ನು ನಿಮಗೆ ಗೋಚರಪಡಿಸಿದ್ದಾರೆ.</verse>
				<verse number="30">ಆ ಗುಟ್ಟನ್ನು ನನಗೂ ವ್ಯಕ್ತಪಡಿಸಿದ್ದಾರೆ. ನಾನು ಎಲ್ಲ ಜೀವಂತರಿಗಿಂತ ಹೆಚ್ಚು ಬುದ್ಧಿಯುಳ್ಳವನು ಎಂದೇನೂ ಅಲ್ಲ. ಆ ಕನಸಿನ ಉದ್ದೇಶ ರಾಜರಾದ ತಮಗೆ ಗೋಚರವಾಗಿ ನಿಮ್ಮ ಮನದಾಲೋಚನೆಗಳು ನಿಮಗೆ ಅರ್ಥವಾಗಲಿ ಎಂದು ನನಗೂ ವ್ಯಕ್ತಪಡಿಸಲಾಗಿದೆ.</verse>
				<verse number="31">“ರಾಜರೇ ಕೇಳಿ, ತಾವು ಕಂಡದ್ದು ಒಂದು ಅದ್ಭುತ ಪ್ರತಿಮೆ. ಥಳಥಳನೆ ಹೊಳೆಯುವ ಆ ದೊಡ್ಡ ಪ್ರತಿಮೆ ನಿಮ್ಮೆದುರಿಗೆ ನಿಂತಿತ್ತು. ಭಯಂಕರವಾಗಿ ಕಾಣಿಸುತ್ತಿತ್ತು.</verse>
				<verse number="32">ಆ ಪ್ರತಿಮೆಯ ತಲೆ ಅಪ್ಪಟ ಬಂಗಾರದ್ದು. ಎದೆ ತೋಳುಗಳು ಬೆಳ್ಳಿಯವು. ಹೊಟ್ಟೆ ಸೊಂಟಗಳು ಕಂಚಿನವು.</verse>
				<verse number="33">ಕಾಲುಗಳು ಕಬ್ಬಿಣದವು. ಪಾದಗಳು ಕಬ್ಬಿಣ ಮತ್ತು ಮಣ್ಣಿನಿಂದ ಮಾಡಿದವು.</verse>
				<verse number="34">ನೀವು ನೋಡುತ್ತಿದ್ದ ಹಾಗೆ ಬೆಟ್ಟದಿಂದ ಒಂದು ಗುಂಡು ಬಂಡೆ, ಯಾವ ಕೈಯೂ ಮುಟ್ಟದೆಯೇ, ಸಿಡಿದುಬಂದು ಆ ಪ್ರತಿಮೆಯ ಕಬ್ಬಿಣ ಮಣ್ಣಿನಿಂದಾದ ಆ ಪಾದಗಳಿಗೆ ಬಡಿದು ಚೂರುಚೂರು ಮಾಡಿಬಿಟ್ಟಿತು.</verse>
				<verse number="35">ಆಗ ಕಬ್ಬಿಣ-ಮಣ್ಣು-ಕಂಚು-ಬೆಳ್ಳಿ-ಬಂಗಾರ ಇವುಗಳೆಲ್ಲವೂ ಪುಡಿಪುಡಿಯಾದವು; ಸುಗ್ಗಿಯ ಕಣಗಳ ಹೊಟ್ಟಿನಂತಾದವು. ಗಾಳಿ ಅವುಗಳನ್ನು ತೂರಿಕೊಂಡುಹೋಯಿತು. ಅವುಗಳಿಗೆ ನೆಲೆಯೇ ಇಲ್ಲವಾಯಿತು. ಪ್ರತಿಮೆಗೆ ಬಡಿದ ಆ ಬಂಡೆ ಮಹಾ ಪರ್ವತವಾಗಿ ಭೂಲೋಕದಲ್ಲೆಲ್ಲಾ ತುಂಬಿಕೊಂಡಿತು.</verse>
				<verse number="36">“ಅರಸರೇ, ಇದೇ ನೀವು ಕಂಡ ಕನಸು. ಇದರ ಅರ್ಥವನ್ನೂ ತಮ್ಮ ಸನ್ನಿಧಿಯಲ್ಲಿ ಅರಿಕೆಮಾಡುತ್ತೇವೆ.</verse>
				<verse number="37">ನೀವು ರಾಜಾಧಿರಾಜರು, ಪರಲೋಕ ದೇವರು ನಿಮಗೆ ರಾಜ್ಯಬಲ, ಪರಾಕ್ರಮ ಹಾಗು ವೈಭವಗಳನ್ನು ದಯಪಾಲಿಸಿದ್ದಾರೆ.</verse>
				<verse number="38">ನರಮಾನವರು ವಾಸಿಸುವ ಸಕಲ ಪ್ರಾಂತ್ಯಗಳಲ್ಲಿ ಆಕಾಶಪಕ್ಷಿಗಳನ್ನೂ ಭೂಜಂತುಗಳನ್ನೂ ನಿಮ್ಮ ಕೈಗೆ ಒಪ್ಪಿಸಿದ್ದಾರೆ.</verse>
				<verse number="39">ನಿಮ್ಮ ಕಾಲವಾದ ಮೇಲೆ ನಿಮಗಿಂತ ಬೀಳಾದ ಮತ್ತೊಂದು ರಾಜ್ಯ ತಲೆಯೆತ್ತಿಕೊಳ್ಳುವುದು. ಅನಂತರ ಬೇರೊಂದು ರಾಜ್ಯ ಕಂಚಿನದಾಗಿ ಕಾಣಿಸಿಕೊಂಡು ಭೂಮಂಡಲವನ್ನೆಲ್ಲ ಆಳುವುದು.</verse>
				<verse number="40">ನಾಲ್ಕನೆಯ ರಾಜ್ಯ ಕಬ್ಬಿಣದಷ್ಟು ಗಟ್ಟಿಗೆ ಕಬ್ಬಿಣ ಎಲ್ಲ ವಸ್ತುಗಳನ್ನು ಚೂರುಚೂರಾಗಿ ಒಡೆದುಹಾಕುತ್ತದೆ. ಅಂತೆಯೇ ಅದು ಎಲ್ಲವನ್ನು ಚೂರುಚೂರಾಗಿಸಿ ಧ್ವಂಸ ಮಾಡುವುದು.</verse>
				<verse number="41">ಪಾದಗಳಲ್ಲಿ ಹಾಗು ಪಾದಬೆರಳುಗಳಲ್ಲಿ ಒಂದು ಅಂಶ ಕಬ್ಬಿಣ ಮತ್ತೊಂದು ಅಂಶ ಮಣ್ಣು ಆಗಿದ್ದನ್ನು ನೀವು ನೋಡಿದಿರಿ. ಅಂತೆಯೇ ಆ ರಾಜ್ಯವು ಭಿನ್ನಭಿನ್ನವಾಗಿರುವುದು. ಜೇಡಿಮಣ್ಣಿನೊಂದಿಗೆ ಕಬ್ಬಿಣ ಮಿಶ್ರವಾಗಿದ್ದನ್ನು ನೀವು ನೋಡಿದಂತೆ ಆ ರಾಜ್ಯದಲ್ಲಿ ಕಬ್ಬಿಣದ ಬಲ ಸೇರಿರುವುದು.</verse>
				<verse number="42">ಕಾಲ್ಬೆರಳುಗಳ ಒಂದಂಶ ಮಣ್ಣು ಆಗಿದ್ದ ಹಾಗೆ ಆ ರಾಜ್ಯದ ಒಂದಂಶ ಗಟ್ಟಿ ಇನ್ನೊಂದು ಅಂಶ ಬೆಂಡು.</verse>
				<verse number="43">ಕಬ್ಬಿಣ ಜೇಡಿಮಣ್ಣಿನೊಂದಿಗೆ ಬೆರೆತಿರುವುದನ್ನು ನೀವು ನೋಡಿದ ಮೇರೆಗೆ ಆ ರಾಜ್ಯಾಂಶಗಳು ಮದುವೆ ಸಂಬಂಧದಿಂದ ಬೆರೆತುಕೊಳ್ಳುವುವು. ಆದರೆ ಕಬ್ಬಿಣ ಮಣ್ಣಿನೊಂದಿಗೆ ಹೇಗೆ ಕಲೆಯುವುದಿಲ್ಲವೋ ಹಾಗೆ ಅವು ಒಂದಕ್ಕೊಂದು ಅಂಟಿಕೊಳ್ಳುವುದಿಲ್ಲ.</verse>
				<verse number="44">ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.</verse>
				<verse number="45">ಬೆಟ್ಟದಿಂದ ಒಂದು ಗುಂಡುಬಂಡೆ, ಯಾವ ಕೈಯೂ ಮುಟ್ಟದೆಯೇ, ಸಿಡಿದುಬಂದು ಕಬ್ಬಿಣ-ಕಂಚು-ಮಣ್ಣು-ಬೆಳ್ಳಿ-ಬಂಗಾರ ಇವುಗಳನ್ನು ಚೂರುಚೂರು ಮಾಡಿದ್ದನ್ನು ನೀವು ನೋಡಿದಿರಿ. ಇದರಿಂದ ಪರಲೋಕ ದೇವರು ಮುಂದೆ ನಡೆಯಲಿರುವ ವಿಷಯಗಳನ್ನು ರಾಜರಾದ ತಮಗೆ ತಿಳಿಯಪಡಿಸಿದ್ದಾರೆ. ಆ ಕನಸು ನಿಜವಾದುದು. ಅದರ ಅರ್ಥವೂ ನಂಬತಕ್ಕದ್ದು,” ಎಂದು ವಿವರಿಸಿದನು.</verse>
				<verse number="46">ಇದನ್ನು ಆಲಿಸಿದ ರಾಜ ನೆಬೂಕದ್ನೆಚ್ಚರನು ಎದ್ದು ಅಡ್ಡಬಿದ್ದನು. ದಾನಿಯೇಲನನ್ನು ಪೂಜಿಸಿ, ಅವನಿಗೆ ನೈವೇದ್ಯಮಾಡಿ, ಧೂಪಾರತಿ ಎತ್ತಬೇಕೆಂದು ಆಜ್ಞಾಪಿಸಿದನು.</verse>
				<verse number="47">ದಾನಿಯೇಲನ ವಿವರಕ್ಕೆ ಉತ್ತರವಾಗಿ, “ನೀನು ಈ ಗುಟ್ಟನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವರು, ರಾಜಾಧಿರಾಜರು, ಗುಟ್ಟನ್ನು ಬಟ್ಟಬಯಲಾಗಿಸುವವರು! ಇದು ಸತ್ಯ,” ಎಂದು ಹೇಳಿದನು.</verse>
				<verse number="48">ಬಳಿಕ ರಾಜನು ದಾನಿಯೇಲನನ್ನು ದೊಡ್ಡ ಪದವಿಗೆ ಏರಿಸಿದನು. ಅಮೂಲ್ಯವಾದ ಬಹುಮಾನಗಳನ್ನು ಕೊಟ್ಟನು. ಬಾಬಿಲೋನಿನ ಸಂಸ್ಥಾನವನ್ನೆಲ್ಲ ಅವನಿಗೆ ಅಧೀನಪಡಿಸಿ ಬಾಬಿಲೋನಿನ ಎಲ್ಲಾ ವಿದ್ವಾಂಸರಿಗೂ ಅವನನ್ನು ಅಧ್ಯಕ್ಷನನ್ನಾಗಿ ನೇಮಿಸಿದನು.</verse>
				<verse number="49">ದಾನಿಯೇಲನ ಕೋರಿಕೆಯ ಪ್ರಕಾರ ರಾಜನು ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರನ್ನು ಬಾಬಿಲೋನಿನ ಪ್ರಾಂತ್ಯಾಧಿಪತಿಗಳನ್ನಾಗಿ ನೇಮಿಸಿದನು. ದಾನಿಯೇಲನು ಮಾತ್ರ ಅರಮನೆಯಲ್ಲೇ ಕಾರ್ಯನಿರತನಾದನು.</verse>
			</chapter>
			<chapter number="3">
				<verse number="1">ರಾಜ ನೆಬೂಕದ್ನೆಚ್ಚರನು 27 ಮೀಟರ್ ಎತ್ತರದ 3 ಮೀಟರ್ ಅಗಲದ ಒಂದು ಬಂಗಾರದ ಪ್ರತಿಮೆಯನ್ನು ಮಾಡಿಸಿ ಬಾಬಿಲೋನ್ ಸಂಸ್ಥಾನದ ‘ದೂರಾ’ ಎಂಬ ಬಯಲಿನಲ್ಲಿ ನಿಲ್ಲಿಸಿದನು.</verse>
				<verse number="2">ಬಳಿಕ ರಾಜ ನೆಬೂಕದ್ನೆಚ್ಚರನು ತಾನು ನಿಲ್ಲಿಸಿದ್ದ ಆ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭವನ್ನು ಏರ್ಪಡಿಸಿ, ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರನ್ನೂ, ಸಮಸ್ತ ಸಂಸ್ಥಾನಾಧಿಕಾರಿಗಳನ್ನೂ ಸಭೆ ಸೇರಿಸುವಂತೆ ದೂತರನ್ನು ಕಳುಹಿಸಿದನು.</verse>
				<verse number="3">ಆ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ, ಕೋಶಾಧ್ಯಕ್ಷ, ನ್ಯಾಯಾಧಿಪತಿ, ವಿಚಾರಕ ಇವರೂ ಸಮಸ್ತ ಸಂಸ್ಥಾನಾಧಿಕಾರಿಗಳೂ ರಾಜ ನೆಬೂಕದ್ನೆಚ್ಚರನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿಷ್ಠಾಪನಾ ಸಮಾರಂಭಕ್ಕೆ ನೆರೆದುಬಂದು ಆ ಪ್ರತಿಮೆಯ ಮುಂದೆ ನಿಂತುಕೊಂಡರು.</verse>
				<verse number="4">ಆಗ, ಸಾರುವವರು ಗಟ್ಟಿಯಾಗಿ ಕೂಗಿ, “ವಿವಿಧ ಜನಾಂಗ-ಕುಲ-ಭಾಷೆಗಳವರೇ, ನಿಮಗೆ ಹೀಗೆಂದು ರಾಜಾಜ್ಞೆಯಾಗಿದೆ:</verse>
				<verse number="5">ನೀವು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು ರಾಜ ನೆಬೂಕದ್ನೆಚ್ಚರರು ನಿಲ್ಲಿಸಿರುವ ಈ ಬಂಗಾರದ ಪ್ರತಿಮೆಯನ್ನು ಆರಾಧಿಸಬೇಕು.</verse>
				<verse number="6">ಯಾರು ಅಡ್ಡಬಿದ್ದು ಆರಾಧಿಸುವುದಿಲ್ಲವೋ ಅಂಥವರನ್ನು ತಕ್ಷಣವೇ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು,” ಎಂದು ಸಾರಿದನು.</verse>
				<verse number="7">ಅಂತೆಯೇ ಸಮಸ್ತ ಜನಾಂಗ-ಕುಲ-ಭಾಷೆಗಳವರು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಎಲ್ಲರು ಅದೇ ಸಮಯದಲ್ಲಿ ಅಡ್ಡಬಿದ್ದು ರಾಜ ನೆಬೂಕದ್ನೆಚ್ಚರನು ನಿಲ್ಲಿಸಿದ್ದ ಆ ಬಂಗಾರದ ಪ್ರತಿಮೆಯನ್ನು ಆರಾಧಿಸಿದರು.</verse>
				<verse number="8">ಆಗ ಕೆಲವು ಮಂದಿ ಬಾಬಿಲೋನಿಯರು ಯೆಹೂದ್ಯರ ಮೇಲೆ ದೂರು ಹೊರಿಸಲು ರಾಜ ನೆಬೂಕದ್ನೆಚ್ಚರನ ಬಳಿಗೆ ಬಂದರು.</verse>
				<verse number="9">“ಅರಸರೇ, ನೀವು ಚಿರಂಜೀವಿಯಾಗಿರಿ!”</verse>
				<verse number="10">ಪ್ರಭುವೇ, ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಪ್ರತಿಯೊಬ್ಬನೂ ಅಡ್ಡಬಿದ್ದು ಬಂಗಾರದ ಪ್ರತಿಮೆಯನ್ನು ಆರಾಧಿಸಲಿ;</verse>
				<verse number="11">ಯಾವನು ಅಡ್ಡಬಿದ್ದು ಆರಾಧಿಸುವುದಿಲ್ಲವೋ ಅಂಥವನು ಧಗಧಗಿಸುವ ಆವಿಗೆಯೊಳಗೆ ಹಾಕಲ್ಪಡಲಿ ಎಂದು ತಾವು ಆಜ್ಞೆ ಮಾಡಿದಿರಲ್ಲವೆ?</verse>
				<verse number="12">ತಾವು ಬಾಬಿಲೋನಿನ ಸಂಸ್ಥಾನಾಧಿಕಾರತ್ವವನ್ನು ವಹಿಸಿಕೊಟ್ಟ ಶದ್ರಕ್, ಮೇಶಕ್ ಹಾಗೂ ಅಬೇದ್‍ನೆಗೋ ಎಂಬ ಕೆಲವು ಮಂದಿ ಯೆಹೂದ್ಯರು ಇದ್ದಾರೆ. ರಾಜರೇ ಅವರು ನಿಮ್ಮನ್ನು ಲಕ್ಷಿಸುವುದಿಲ್ಲ. ನಿಮ್ಮ ದೇವರುಗಳಿಗೆ ಸೇವೆಮಾಡುವುದಿಲ್ಲ, ನೀವು ಸ್ಥಾಪಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲ,” ಎಂದು ಆಪಾದಿಸಿದರು.</verse>
				<verse number="13">ನೆಬೂಕದ್ನೆಚ್ಚರನು ಉಗ್ರಕೋಪಗೊಂಡು ಶದ್ರಕ್, ಮೇಶಕ್, ಅಬೇದ್‍ನೆಗೋ ಎಂಬವರನ್ನು ಹಿಡಿದುತರಲು ಆಜ್ಞಾಪಿಸಿದನು.</verse>
				<verse number="14">ಅದರಂತೆಯೇ ಅವರನ್ನು ಹಿಡಿದುತರಲಾಯಿತು. ನೆಬೂಕದ್ನೆಚ್ಚರನು ಅವರಿಗೆ, “ಶದ್ರಕ್, ಮೇಶಕ್, ಹಾಗು ಅಬೇದ್‍ನೆಗೋ ಎಂಬವರೇ, ನೀವು ಬೇಕುಬೇಕೆಂದು, ನನ್ನ ದೇವರಿಗೆ ಸೇವೆಮಾಡದೆ, ನಾನು ಸ್ಥಾಪಿಸಿದ ಬಂಗಾರದ ಪ್ರತಿಮೆಯನ್ನು ಆರಾಧಿಸದೆ ಇರುವಿರೋ?</verse>
				<verse number="15">ಈಗಲಾದರು ನೀವು ಸಿದ್ಧರಾಗಿದ್ದು ತುತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ಓಲಗ ಮುಂತಾದ ಸಕಲ ವಾದ್ಯಗಳ ಧ್ವನಿ ಕೇಳಿದ ಕೂಡಲೆ ಅಡ್ಡಬಿದ್ದು ನಾನು ಸ್ಥಾಪಿಸಿದ ಪ್ರತಿಮೆಯನ್ನು ಆರಾಧಿಸಿದರೆ ಸರಿ, ಇಲ್ಲವಾದರೆ ಈ ಗಳಿಗೆಯಲ್ಲೆ ನಿಮ್ಮನ್ನು ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಲಾಗುವುದು. ನಿಮ್ಮನ್ನು ನನ್ನ ಕೈಯಿಂದ ಬಿಡಿಸಬಲ್ಲ ದೇವರು ಯಾರಿದ್ದಾನೆ?” ಎಂದು ಹೇಳಿದನು.</verse>
				<verse number="16">ಇದನ್ನು ಕೇಳಿದ ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರು ರಾಜನಿಗೆ: “ನೆಬೂಕದ್ನೆಚ್ಚರ ಅರಸರೇ, ಈ ವಿಷಯದಲ್ಲಿ ನಾವು ನಿಮಗೆ ಏನನ್ನೂ ಹೇಳಬೇಕಾಗಿಲ್ಲ.</verse>
				<verse number="17">ನಾವು ಸೇವೆಮಾಡುವ ದೇವರಿಗೆ ಚಿತ್ತವಿದ್ದರೆ ಅವರೇ ಧಗಧಗನೆ ಉರಿಯುವ ಆವಿಗೆಯೊಳಗಿಂದಲೂ ನಮ್ಮನ್ನು ಕಾಪಾಡಬಲ್ಲರು. ಅವರೇ ನಮ್ಮನ್ನು ನಿಮ್ಮ ಕೈಯಿಂದಲೂ ಬಿಡಿಸಬಲ್ಲರು.</verse>
				<verse number="18">ಒಂದು ವೇಳೆ ಬಿಡಿಸದಿದ್ದರೂ ರಾಜರೇ, ಇದು ನಿಮಗೆ ತಿಳಿದಿರಲಿ: ನಾವು ನಿಮ್ಮ ದೇವರುಗಳಿಗೆ ಸೇವೆಮಾಡುವುದಿಲ್ಲ. ನೀವು ಸ್ಥಾಪಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವುದಿಲ್ಲ,” ಎಂದು ಉತ್ತರಕೊಟ್ಟರು.</verse>
				<verse number="19">ಆಗ ನೆಬೂಕದ್ನೆಚ್ಚರನು ಕೋಪೋದ್ರೇಕಗೊಂಡನು. ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಅವರ ಬಗ್ಗೆ ಅವನ ಮುಖಚರ್ಯೆ ಬದಲಾಯಿತು. ಆವಿಗೆಯನ್ನು ವಾಡಿಕೆಗಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕೆಂದು ಆಜ್ಞಾಪಿಸಿದನು.</verse>
				<verse number="20">ಇದಲ್ಲದೆ ತನ್ನ ಸೈನ್ಯದ ಕೆಲವುಮಂದಿ ಶೂರರಿಗೆ ಶದ್ರಕ್, ಮೇಶಕ್, ಅಬೇದ್‍ನೆಗೋ ಅವರನ್ನು ಕಟ್ಟಿ ಧಗಧಗನೆ ಉರಿಯುವ ಆವಿಗೆಯೊಳಗೆ ಎತ್ತಿಹಾಕಬೇಕೆಂದು ಅಪ್ಪಣೆಕೊಟ್ಟನು.</verse>
				<verse number="21">ಅದರಂತೆಯೇ ಉಡಿಗೆತೊಡಿಗೆ, ಪೇಟ ಮುಂತಾದ ಬಟ್ಟೆಬರೆಗಳನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಆವಿಗೆಯೊಳಗೆ ಹಾಕಿಬಿಟ್ಟರು.</verse>
				<verse number="22">ರಾಜಾಜ್ಞೆಯು ಖಡಾಖಂಡಿತವಾಗಿದ್ದರಿಂದಲೂ ಆವಿಗೆಯ ಕಾವು ಅತಿ ತೀಕ್ಷ್ಣವಾಗಿದ್ದರಿಂದಲೂ ಅಗ್ನಿಕುಂಡವು ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರನ್ನು ಎತ್ತಿ ತಂದವರನ್ನೇ ಭಸ್ಮಮಾಡಿಬಿಟ್ಟಿತು.</verse>
				<verse number="23">ಅತ್ತ ಶದ್ರಕ್, ಮೇಶಕ್, ಅಬೇದ್‍ನೆಗೋ ಈ ಮೂವರು ಕಟ್ಟಿನೊಂದಿಗೆ ಧಗಧಗನೆ ಉರಿಯುವ ಆವಿಗೆಯ ನಡುವೆ ಬಿದ್ದರು.</verse>
				<verse number="24">ಇತ್ತ ರಾಜ ನೆಬೂಕದ್ನೆಚ್ಚರನು ಬೆಚ್ಚಿಬಿದ್ದು, ತಟ್ಟನೆ ಎದ್ದು ತನ್ನ ಮಂತ್ರಿಗಳನ್ನು ಕರೆಸಿ, “ನಾವು ಮೂವರನ್ನು ಕಟ್ಟಿ ಬೆಂಕಿಯಲ್ಲಿ ಹಾಕಿಸಿದೆವಲ್ಲವೆ?” ಎಂದು ಕೇಳಿದನು. ಅವರು ರಾಜನಿಗೆ, “ಹೌದು ಪ್ರಭೂ, ಅದು ಸತ್ಯ,” ಎಂದು ಉತ್ತರಕೊಟ್ಟರು.</verse>
				<verse number="25">ಅದಕ್ಕೆ ಅವರು, “ಆದರೆ, ಇಗೋ ಕಟ್ಟಿಲ್ಲದ ನಾಲ್ವರನ್ನು ನಾನು ನೋಡುತ್ತಿದ್ದೇನೆ. ಬೆಂಕಿಯಲ್ಲಿ ತಿರುಗಾಡುತ್ತಿದ್ದಾರೆ; ಅವರಿಗೆ ಯಾವ ಹಾನಿಯೂ ಆಗುತ್ತಿಲ್ಲ.</verse>
				<verse number="26">ನಾಲ್ಕನೆಯವನ ರೂಪ ದೇವಪುತ್ರನ ರೂಪದಂತಿದೆ!” ಎಂದು ಹೇಳಿ ಧಗಧಗನೆ ಉರಿಯುತ್ತಿದ್ದ ಆವಿಗೆಯ ಬಾಯಿಯ ಬಳಿಗೆಹೋಗಿ, “ಪರಾತ್ಪರ ದೇವರ ದಾಸರಾದ ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರೇ, ಬನ್ನಿ, ಹೊರಗೆ ಬನ್ನಿ,” ಎಂದು ಕೂಗಿಕೊಂಡನು. ಅಂತೆಯೇ ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಅವರು ಬೆಂಕಿಯಿಂದ ಹೊರಟುಬಂದರು.</verse>
				<verse number="27">ಅವರನ್ನು ನೋಡಲು ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿ ಇವರೆಲ್ಲರು ಕೂಡಿಬಂದರು. ಅವರಿಗೆ ಬೆಂಕಿಯ ತಾಪವೂ ತಟ್ಟಿಲ್ಲ. ತಲೆಗೂದಲೂ ಸುಟ್ಟಿಲ್ಲ, ಅವರ ಬಟ್ಟೆಬರೆಗೆ ಏನೂ ಆಗಿಲ್ಲ, ಬೆಂಕಿಯ ವಾಸನೆಯೂ ಇಲ್ಲ, ಎಂದು ತಿಳಿದುಕೊಂಡರು.</verse>
				<verse number="28">ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರಿಗೆ ಸ್ತೋತ್ರವಾಗಲಿ! ಆತ ತನ್ನ ದೂತರನ್ನು ಕಳಿಸಿ ತನ್ನಲ್ಲಿ ವಿಶ್ವಾಸವಿಟ್ಟ ಇವರನ್ನು ರಕ್ಷಿಸಿದ್ದಾನೆ. ಇವರೋ ರಾಜಾಜ್ಞೆಯನ್ನೂ ಮೀರಿ ತಮ್ಮ ದೇವರನ್ನೇ ಹೊರತು ಇನ್ನಾವ ದೇವರನ್ನೂ ಪೂಜಿಸಿ ಆರಾಧಿಸಬಾರದೆಂದು ಸ್ವಂತ ದೇಹಗಳನ್ನೇ ಸಾವಿಗೊಪ್ಪಿಸಿದಂಥ ಭಕ್ತರು!</verse>
				<verse number="29">ಸಕಲ ದೇಶ-ಕುಲ-ಭಾಷೆಗಳವರಲ್ಲಿ ಯಾರಾದರು ಶದ್ರಕ್, ಮೇಶಕ್ ಹಾಗು ಅಬೇದ್‍ನೆಗೋ ಎಂಬುವರ ದೇವರ ವಿಷಯದಲ್ಲಿ ಅಲ್ಲಸಲ್ಲದ ಮಾತನಾಡಿದರೆ ಅಂಥವರನ್ನು ತುಂಡುತುಂಡಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಗುಂಡಿಯನ್ನಾಗಿಸಬೇಕೆಂದು ಆಜ್ಞೆ ವಿಧಿಸುತ್ತೇನೆ. ಹೀಗೆ ರಕ್ಷಿಸಲು ಸಮರ್ಥನಾದ ಇನ್ನಾವ ದೇವರೂ ಇಲ್ಲವೇ ಇಲ್ಲ,” ಎಂದು ಹೇಳಿದನು.</verse>
				<verse number="30">ಇದಾದ ಬಳಿಕ ರಾಜನು ಶದ್ರಕ್, ಮೇಶಕ್, ಅಬೇದ್‍ನೆಗೋ ಎಂಬುವರನ್ನು ಸಂಸ್ಥಾನದಲ್ಲಿ ಉನ್ನತಪದವಿಗೆ ಏರಿಸಿದನು.</verse>
			</chapter>
			<chapter number="4">
				<verse number="1">ಜಗದಲ್ಲಿ ವಾಸಿಸುವ ಎಲ್ಲಾ ಜನಾಂಗದವರಿಗೂ ಕುಲದವರಿಗೂ ಭಾಷೆಯವರಿಗೂ ರಾಜ ನೆಬೂಕದ್ನೆಚ್ಚರನು ಹೊರಡಿಸಿದ ಪ್ರಕಟಣೆ - “ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!</verse>
				<verse number="2">ಪರಾತ್ಪರ ದೇವರು ನನ್ನ ವಿಷಯದಲ್ಲಿ ನಡೆಸಿರುವ ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಪ್ರಚುರಪಡಿಸುವುದು ನನಗೆ ವಿಹಿತವೆಂದು ತೋರಿಬಂದಿದೆ:</verse>
				<verse number="3">ದೇವರ ಸೂಚಕಕಾರ್ಯಗಳು ಎಷ್ಟೋ ಅತಿಶಯ! ಅವರ ಅದ್ಭುತಗಳು ಎಷ್ಟೋ ಅಪಾರ! ಅವರ ರಾಜ್ಯ ಶಾಶ್ವತ ಸಾಮ್ರಾಜ್ಯ; ಅವರ ಆಳ್ವಿಕೆ ತಲತಲಾಂತರಕ್ಕೂ ಸ್ಥಿರ.</verse>
				<verse number="4">“ನೆಬೂಕದ್ನೆಚ್ಚರನಾದ ನಾನು ನನ್ನ ಅರಮನೆಯಲ್ಲಿ ಸುಖವಾಗಿದ್ದೆ. ನನ್ನ ರಾಜಭವನದಲ್ಲಿ ನೆಮ್ಮದಿಯಿಂದ ಇದ್ದೆ.</verse>
				<verse number="5">ಹೀಗಿರುವಲ್ಲಿ ಭಯಂಕರವಾದ ಕನಸೊಂದನ್ನು ಕಂಡೆ. ನಿದ್ರೆಯಲ್ಲಿ ನನಗೆ ತೋಚಿದ ಆಲೋಚನೆಗಳು ಹಾಗು ಮನಸ್ಸಿಗೆ ಬಿದ್ದ ಸ್ವಪ್ನಗಳು ನನ್ನನ್ನು ಕಳವಳಕ್ಕೆ ಈಡುಮಾಡಿದವು.</verse>
				<verse number="6">ಆದ್ದರಿಂದ ಕನಸಿನ ಅರ್ಥವನ್ನು ನನಗೆ ತಿಳಿಸಬೇಕೆಂದು ಬಾಬಿಲೋನಿನ ವಿದ್ವಾಂಸರೆಲ್ಲರನ್ನು ಕರೆದುತರಬೇಕೆಂದು ಆಜ್ಞಾಪಿಸಿದೆ.</verse>
				<verse number="7">ಜೋಯಿಸರು, ಮಂತ್ರವಾದಿಗಳು, ಪಂಡಿತರು, ಶಾಕುನಿಕರು ಇವರೆಲ್ಲರು ನನ್ನ ಸಮ್ಮುಖಕ್ಕೆ ಬಂದರು. ನಾನು ಕನಸನ್ನು ತಿಳಿಸಿದೆ. ಆದರೆ ಅದರ ಅರ್ಥವನ್ನು ಅವರಿಂದ ತಿಳಿಸಲಾಗಲಿಲ್ಲ.</verse>
				<verse number="8">ನನ್ನ ದೇವರ ಹೆಸರು ಸೇರಿರುವ ‘ಬೇಲ್ತೆಶಚ್ಚರ’ ಎಂಬ ಅಡ್ಡಹೆಸರನ್ನು ಹೊಂದಿದ ದಾನಿಯೇಲನು ಕೊನೆಗೆ ನನ್ನ ಬಳಿಗೆ ಬಂದ. ಪರಿಶುದ್ಧ ದೇವರ ಆತ್ಮ ಅವನಲ್ಲಿತ್ತು. ಅವನಿಗೆ ನನ್ನ ಕನಸನ್ನು ಹೀಗೆ ತಿಳಿಸಿದೆ.</verse>
				<verse number="9">‘ಬೇಲ್ತೆಶಚ್ಚರನೇ, ಜೋಯಿಸರಲ್ಲಿ ಪ್ರಾಮುಖ್ಯನೇ, ಪರಿಶುದ್ಧ ದೇವರ ಆತ್ಮ ನಿನ್ನಲ್ಲಿ ನೆಲೆಯಾಗಿದೆಯೆಂದು ತಿಳಿದಿದ್ದೇನೆ. ಯಾವ ರಹಸ್ಯವೂ ನಿನಗೆ ಅಶೋಧ್ಯವಲ್ಲವೆಂದು ನನಗೆ ಗೊತ್ತು. ಆದುದರಿಂದ ನಾನು ಕಂಡ ಕನಸನ್ನೂ ಅದರ ಅರ್ಥವನ್ನೂ ನನಗೆ ತಿಳಿಸು.’</verse>
				<verse number="10">‘ನಾನು ಹಾಸಿಗೆ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸುಗಳು ಇವು: ಇಗೋ ಭೂಮಧ್ಯದಲ್ಲಿ ಬಹು ಎತ್ತರವಾದ ಒಂದು ಮರವನ್ನು ಕಂಡೆ.</verse>
				<verse number="11">ಆ ಮರ ಬೆಳೆದು ಬಲಗೊಂಡಿತ್ತು. ಅದರ ತುದಿ ಆಕಾಶವನ್ನು ಮುಟ್ಟುತ್ತಿತ್ತು. ಅದು ಭೂಲೋಕದ ಕಟ್ಟಕಡೆಗೂ ಕಾಣಿಸುತ್ತಿತ್ತು.</verse>
				<verse number="12">ಅದರ ಎಲೆಗಳು ಚೆಲುವಾಗಿದ್ದವು. ಅದು ಹಣ್ಣುಗಳಿಂದ ತುಂಬಿತ್ತು. ಅದರಿಂದ ಎಲ್ಲಕ್ಕೂ ಆಹಾರ, ವನ್ಯಮೃಗಗಳಿಗೆ ಅದರ ನೆರಳಿನಲ್ಲಿ ಆಶ್ರಯ, ಆಕಾಶದ ಪಕ್ಷಿಗಳಿಗೆ ಅದರ ಕೊಂಬೆಗಳಲ್ಲಿ ನೆಲೆ, ಎಲ್ಲಾ ಪ್ರಾಣಿಗಳಿಗೂ ಅದರಿಂದ ಪೋಷಣೆ ದೊರಕುತ್ತಿತ್ತು.</verse>
				<verse number="13">‘ನಾನು ಹಾಸಿಗೆ ಮೇಲೆ ಮಲಗಿದ್ದಾಗ ನನ್ನ ಮನಸ್ಸಿಗೆ ಬಿದ್ದ ಕನಸಿನಲ್ಲಿ, ಇಗೋ, ಕಾವಲುಗಾರನಾದ ದೇವದೂತನೊಬ್ಬನು ಆಕಾಶದಿಂದ ಇಳಿದು, ಗಟ್ಟಿಯಾಗಿ ಕೂಗಿ:</verse>
				<verse number="14">ಆ ಮರವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿ, ಎಲೆಗಳನ್ನು ಉದುರಿಸಿ, ಹಣ್ಣುಗಳನ್ನು ಕಿತ್ತುಬಿಸಾಡಿ. ಮೃಗಗಳು ಅದರ ನೆರಳನ್ನು ಬಿಟ್ಟು ತೆರಳಲಿ, ಪಕ್ಷಿಗಳು ರೆಂಬೆಗಳನ್ನು ತೊರೆದುಹೋಗಲಿ.</verse>
				<verse number="15">ಆದರೆ ಅದರ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಹಿತ್ತಾಳೆ ಕಬ್ಬಿಣಗಳ ಪಟ್ಟಿಯನ್ನು ಅದಕ್ಕೆ ಬಿಗಿಯಿರಿ. ಅಡವಿಯ ಹುಲ್ಲು ಅದರ ಸುತ್ತ ಬೆಳೆದಿರಲಿ.’ ‘ಆಕಾಶದ ಇಬ್ಬನಿ ಅದನ್ನು ತೋಯಿಸಲಿ, ಹುಲ್ಲುಗಿಡಗಳ ಹಾಗು ಕಾಡುಮೃಗಗಳ ನಡುವೆ ಅದಿರಲಿ.</verse>
				<verse number="16">ಅದಕ್ಕೆ ಏಳುವರ್ಷ ಕಾಲ, ಮನುಷ್ಯ ಹೃದಯ ಹೋಗಿ ಮೃಗದ ಹೃದಯ ಬರಲಿ.</verse>
				<verse number="17">ಇದು ಕಾವಲುಗಾರ ದೂತನ ತೀರ್ಮಾನ; ಹಾಗು ದೇವರ ತೀರ್ಪು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೂ ಅಧಿಕಾರವಿದೆ. ಅದರ ಆಳ್ವಿಕೆಯನ್ನು ಅವರು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಕನಿಷ್ಠರನ್ನೂ ಆ ಪದವಿಗೆ ನೇಮಿಸುತ್ತಾರೆ. ಇದು ಎಲ್ಲಾ ಜನರಿಗೆ ತಿಳಿದಿರಬೇಕೆಂಬುದೇ ಈ ತೀರ್ಮಾನ,' ಎಂದು ಸಾರಿದನು.</verse>
				<verse number="18">‘ಇದೇ ನಾನು ಕಂಡ ಕನಸು. ಬೇಲ್ತೆಶಚ್ಚರನೇ, ನನ್ನ ರಾಜ್ಯದ ಸಕಲ ವಿದ್ವಾಂಸರಲ್ಲಿ ಯಾರಿಂದಲೂ ಇದರ ಅರ್ಥವನ್ನು ಹೇಳಲಾಗಲಿಲ್ಲ. ಅದನ್ನು ನೀನು ತಿಳಿಸು. ಪರಿಶುದ್ಧ ದೇವರ ಆತ್ಮ ನಿನ್ನಲ್ಲಿ ನೆಲೆಸಿರುವುದರಿಂದ ಇದು ನಿನ್ನಿಂದ ಸಾಧ್ಯ’,” ಎಂದನು ರಾಜ ನೆಬೂಕದ್ನೆಚ್ಚರನು.</verse>
				<verse number="19">ಇದನ್ನು ಕೇಳಿದ ಬೇಲ್ತೆಶಚ್ಚರನೆಂದು ಹೆಸರುಗೊಂಡಿದ್ದ ದಾನಿಯೇಲನು ತುಸು ಹೊತ್ತು ಸ್ತಬ್ದನಾದ. ಅವನ ಬುದ್ಧಿಗೆ ಹೊಳೆದ ವಿಷಯ ಅವನಲ್ಲಿ ದಿಗಿಲನ್ನು ಉಂಟುಮಾಡಿತು. ರಾಜನು ಇದನ್ನು ಅರಿತು, “ಬೇಲ್ತೆಶಚ್ಚರನೇ, ನನ್ನ ಕನಸಾಗಲಿ, ಅದರ ಅರ್ಥವಾಗಲಿ ನಿನ್ನನ್ನು ಹೆದರಿಸದಿರಲಿ,” ಎಂದು ಧೈರ್ಯಹೇಳಿದ. ಆಗ ಬೇಲ್ತೆಶಚ್ಚರನು: \ನನ್ನೊಡೆಯಾ, ಈ ಕನಸು ನಿನ್ನ ವೈರಿಗಳಿಗೆ ಬರಲಿ! ಅದರ ಅರ್ಥ ನಿನ್ನ ವಿರೋಧಿಗಳಿಗೆ ತಗಲಲಿ!</verse>
				<verse number="20">ನೀವು ಕಂಡ ಮರವು ಬೆಳೆದು, ಬಲಗೊಂಡು ಆಕಾಶದ ತುದಿಯನ್ನು ಮುಟ್ಟುತ್ತಿತ್ತು.</verse>
				<verse number="21">ಲೋಕದ ಜನರೆಲ್ಲರಿಗೆ ಕಾಣಿಸುತ್ತಿತ್ತು. ಅಂದವಾದ ಎಲೆಗಳನ್ನೂ ಹುಲುಸಾದ ಹಣ್ಣುಗಳನ್ನೂ ಬಿಡುತ್ತಿತ್ತು. ಎಲ್ಲಕ್ಕೂ ಆಹಾರ ಒದಗಿಸುತ್ತಿತ್ತು. ತನ್ನ ನೆರಳನ್ನು ವನ್ಯಮೃಗಗಳಿಗೆ ಆಶ್ರಯವಾಗಿಯೂ ತನ್ನ ಕೊಂಬೆಗಳನ್ನು ಆಕಾಶ ಪಕ್ಷಿಗಳಿಗೆ ನೆಲೆಯಾಗಿಯೂ ಮಾಡಿತ್ತು. ಕನಸಿನಲ್ಲಿ ನಿಮಗೆ ತೋರಿದ ಆ ಮರವು ನೀವೇ.</verse>
				<verse number="22">“ರಾಜರೇ, ನೀವು ಬೆಳೆದು ಬಲಗೊಂಡಿದ್ದೀರಿ. ನಿಮ್ಮ ಕೀರ್ತಿ ವೃದ್ಧಿಯಾಗಿ ಗಗನಕ್ಕೇರಿದೆ. ನಿಮ್ಮ ಆಳ್ವಿಕೆ ಲೋಕದ ಕಟ್ಟಕಡೆಗೂ ವ್ಯಾಪಿಸಿದೆ.</verse>
				<verse number="23">ಕಾವಲುಗಾರನಾದ ದೂತನು ಆಕಾಶದಿಂದ ಇಳಿದುಬಂದು: ‘ಈ ಮರವನ್ನು ಕಡಿದು ಹಾಳುಮಾಡಿ. ಅದರ ಬುಡದ ಮೋಟನ್ನು ನೆಲದಲ್ಲಿ ಉಳಿಸಿ ಹಿತ್ತಾಳೆ ಕಬ್ಬಿಣಗಳ ಪಟ್ಟಿಯನ್ನು ಅದಕ್ಕೆ ಬಿಗಿಯಿರಿ. ಅಡವಿಯ ಹುಲ್ಲು ಅದರ ಸುತ್ತಲು ಬೆಳೆದಿರಲಿ, ಆಕಾಶದ ಇಬ್ಬನಿ ಅದನ್ನು ತೋಯಿಸಲಿ. ಏಳು ವರ್ಷಕಾಲ ಕಳೆಯುವ ತನಕ ಕಾಡುಮೃಗಗಳ ಸಹವಾಸದ ಗತಿ ಬರಲಿ’ ಎಂದು ಸಾರುವುದನ್ನು ರಾಜರಾದ ನೀವೇ ನೋಡಿದ್ದೀರಿ.”</verse>
				<verse number="24">“ರಾಜರೇ, ಕನಸಿನ ತಾತ್ಪರ್ಯ ಇದು: ನನ್ನೊಡೆಯರಾದ ಅರಸರಿಗೆ ಉಂಟಾಗಲಿರುವ ಪರಾತ್ಪರ ದೇವರ ತೀರ್ಪು ಹೀಗಿದೆ -</verse>
				<verse number="25">ತಾವು ಮಾನವ ಸಮಾಜದಿಂದ ಬಹಿಷ್ಕೃತರಾಗುವಿರಿ. ಕಾಡುಮೃಗಗಳ ನಡುವೆ ವಾಸಮಾಡುವಿರಿ. ದನಕರುಗಳಂತೆ ಹುಲ್ಲು ಮೇಯುವ ಗತಿ ನಿಮ್ಮದಾಗುವುದು. ಆಕಾಶದ ಇಬ್ಬನಿ ನಿಮ್ಮನ್ನು ತೋಯಿಸುವುದು. ಪರಾತ್ಪರ ದೇವರಿಗೆ ಮಾನವರ ರಾಜ್ಯದ ಮೇಲೂ ಅಧಿಕಾರವಿದೆ. ಅದನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದು ತಮಗೆ ತಿಳಿದುಬರುವುದರೊಳಗೆ ಏಳು ವರ್ಷ ಕಳೆದಿರುತ್ತದೆ.</verse>
				<verse number="26">ಆ ಮರದ ಬುಡದ ಮೋಟನ್ನು ಉಳಿಸಿರೆಂದು ಅಪ್ಪಣೆಯಾಗಿದೆ. ಇದರ ತಾತ್ಪರ್ಯವೇನೆಂದರೆ: ಪರಲೋಕದ ದೇವರಿಗೆ ಸರ್ವಾಧಿಕಾರ ಉಂಟೆಂಬುದನ್ನು ತಾವು ಅರಿತುಕೊಂಡ ನಂತರ ನಿಮ್ಮ ರಾಜ್ಯ ನಿಮಗೆ ಸ್ಥಿರವಾಗಿ ದೊರಕುವುದು.</verse>
				<verse number="27">ಆದಕಾರಣ ಅರಸರೇ, ಈ ನನ್ನ ಬುದ್ಧಿಮಾತು ತಮಗೆ ಒಪ್ಪಿಗೆಯಾಗಲಿ: ಸದಾಚಾರದ ಮೂಲಕ ನಿಮ್ಮ ಪಾಪಗಳನ್ನು ಅಳಿಸಿಬಿಡಿ. ದೀನದಲಿತರಿಗೆ ದಯೆತೋರಿ. ನಿಮ್ಮ ಅಪರಾಧಗಳನ್ನು ನೀಗಿಸಿಕೊಳ್ಳಿ. ಇದರಿಂದ ಬಹುಶಃ ನಿಮ್ಮ ನೆಮ್ಮದಿಕಾಲ ಹೆಚ್ಚಾದೀತು,” ಎಂದು ಅರಿಕೆಮಾಡಿದನು.</verse>
				<verse number="28">ಇದೆಲ್ಲವು ನೆಬೂಕದ್ನೆಚ್ಚರನೆಂಬ ರಾಜನಿಗೆ ಸಂಭವಿಸಿದವು.</verse>
				<verse number="29">ಹನ್ನೆರಡು ತಿಂಗಳು ಕಳೆದ ನಂತರ ಅವನು ಒಂದು ದಿನ ಬಾಬಿಲೋನಿನ ಅರಮನೆಯ ಮೇಲ್ಗಡೆ ತಿರುಗಾಡುತ್ತಿದ್ದನು.</verse>
				<verse number="30">ಆಗ ಅವನು, “ಹಾ, ಬಾಬಿಲೋನ್ ಎಂಥಾ ಮಹಾನಗರ! ಇಗೋ, ನನ್ನ ಶಕ್ತಿ ಸಾಮರ್ಥ್ಯದಿಂದ ನಾನು ಕಟ್ಟಿಸಿರುವ ರಾಜಭವನ! ನನ್ನ ಕೀರ್ತಿ ಪರಾಕ್ರಮವನ್ನು ಇದು ಪ್ರಕಟಿಸುತ್ತಿದೆ!” ಎಂದು ಕೊಚ್ಚಿಕೊಂಡನು.</verse>
				<verse number="31">ಈ ಮಾತು ಅವನ ಬಾಯಿಂದ ಹೊರಡುತ್ತಿರುವಾಗಲೆ, “ಎಲೈ ರಾಜ ನೆಬೂಕದ್ನೆಚ್ಚರನೇ, ನಿನ್ನ ವಿಷಯವಾದ ಈ ದೈವೋಕ್ತಿಯನ್ನು ಕೇಳು -</verse>
				<verse number="32">‘ಈ ರಾಜ್ಯ ನಿನ್ನನ್ನು ಬಿಟ್ಟು ತೊಲಗಿದೆ. ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ದನಗಳಂತೆ ಹುಲ್ಲು ಮೇಯುವ ಗತಿ ನಿನ್ನದಾಗುವುದು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಆ ರಾಜ್ಯವನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದನ್ನು ನೀನು ಗ್ರಹಿಸುವುದರೊಳಗೆ ಏಳು ವರ್ಷ ಕಳೆಯುವುದು,” ಎಂದು ದೈವವಾಣಿಯಾಯಿತು.”</verse>
				<verse number="33">ಆ ನುಡಿ ಕೂಡಲೆ ನೆರವೇರಿತು. ನೆಬೂಕದ್ನೆಚ್ಚರನು ಸಮಾಜದಿಂದ ಬಹಿಷ್ಕೃತನಾದ. ದನಗಳಂತೆ ಹುಲ್ಲು ಮೇಯುತ್ತಾ ಆಕಾಶದ ಇಬ್ಬನಿಯಿಂದ ನೆನೆಯುತ್ತಾ ಇದ್ದ. ಅವನ ಕೂದಲು ಹದ್ದುಗಳ ರೆಕ್ಕೆಗಳಂತೆಯೂ, ಅವನ ಉಗುರು ಹಕ್ಕಿಗಳ ಉಗುರಿನಂತೆಯೂ ಬೆಳೆದವು.</verse>
				<verse number="34">ಗುರುತಿಸಲಾಗಿದ್ದ ಕಾಲವು ಕಳೆಯಿತು. ನೆಬೂಕದ್ನೆಚ್ಚರನು, “ನಾನು ಪರಲೋಕದ ಕಡೆಗೆ ಕಣ್ಣೆತ್ತಿ ನೋಡಿದೆ. ನನ್ನ ಬುದ್ಧಿ ಮತ್ತೆ ನನಗೆ ಸ್ವಾಧೀನವಾಯಿತು. ಆಗ ನಾನು ಪರಾತ್ಪರ ದೇವರನ್ನು ಕೊಂಡಾಡಿದೆ. ಜೀವಸ್ವರೂಪರಾದ ಅವರಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆ: ಆತನ ಆಳ್ವಿಕೆ ಶಾಶ್ವತ ಆತನ ರಾಜ್ಯ ತಲತಲಾಂತರಕ್ಕೂ ಸ್ಥಿರ.</verse>
				<verse number="35">ಆತನ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರು ಶೂನ್ಯರು ಇಹದ ಜನರೂ ಪರದ ದೂತರೂ ಆತನಿಗೆ ಅಧೀನರು. ಆತನ ಶಕ್ತಿಯುತ ಹಸ್ತವನ್ನು ಯಾರಿಂದಲೂ ತಡೆಯಲಾಗದು. ‘ನೀನು ಮಾಡುತ್ತಿರುವುದೇನು?’ ಎಂದು ಯಾರೂ ಆತನನ್ನು ಪ್ರಶ್ನಿಸಲಾರರು.</verse>
				<verse number="36">ಅದೇ ಸಮಯದಲ್ಲಿ ನನ್ನ ಬುದ್ಧಿ ನನಗೆ ಮತ್ತೆ ಸ್ವಾಧೀನವಾಯಿತು. ಘನತೆ ಗೌರವಗಳು ನನಗೆ ಮತ್ತೆ ಲಭಿಸಿದವು. ನನ್ನ ರಾಜ್ಯದ ಕೀರ್ತಿ ಬೆಳಗತೊಡಗಿತು. ನನ್ನ ಮಂತ್ರಿಗಳೂ ಪದಾಧಿಕಾರಿಗಳೂ ನನ್ನನ್ನು ಸ್ವಾಗತಿಸಲು ಬಂದರು. ರಾಜ್ಯದಲ್ಲಿ ನಾನು ನೆಲೆಗೊಂಡೆ. ಹಿಂದೆ ಇದ್ದುದಕ್ಕಿಂತಲೂ ಹೆಚ್ಚಿನ ಪ್ರತಿಭೆ ನನ್ನದಾಯಿತು.</verse>
				<verse number="37">ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.</verse>
			</chapter>
			<chapter number="5">
				<verse number="1">ಬೇಲ್ಶಚ್ಚರ ಎಂಬ ಅರಸನು ತನ್ನ ರಾಜ್ಯದ ಪ್ರಮುಖರಲ್ಲಿ ಸಾವಿರ ಮಂದಿಯನ್ನು ಸೇರಿಸಿ ಒಂದು ಔತಣವನ್ನು ಏರ್ಪಡಿಸಿದ. ಆ ಸಾವಿರ ಜನರ ಮುಂದೆ ಅವನೂ ದ್ರಾಕ್ಷಾರಸವನ್ನು ಕುಡಿದ.</verse>
				<verse number="2">ಹಾಗೆ ಕುಡಿದುಕೊಂಡಿರುವಾಗ ತಾನೂ ತನ್ನ ಪ್ರಮುಖರೂ ಪತ್ನಿಯರೂ ಉಪಪತ್ನಿಯರೂ ಕುಡಿಯುವುದಕ್ಕಾಗಿ ತನ್ನ ತಂದೆ ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದ ಗರ್ಭಗುಡಿಯಿಂದ ಸೂರೆಯಾಗಿ ತಂದ</verse>
				<verse number="3">ಬಂಗಾರದ ಪೂಜಾ ಪಾತ್ರೆಗಳನ್ನು ತರಿಸಿದ. ರಾಜನೂ ಅವನ ಪ್ರಮುಖರೂ ಪತ್ನಿ - ಉಪಪತ್ನಿಯರೂ ಅವುಗಳಲ್ಲಿ ಕುಡಿದರು.</verse>
				<verse number="4">ಕುಡಿದುಕೊಂಡೇ ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ತಮ್ಮ ದೇವರುಗಳನ್ನು ಆರಾಧಿಸಿದರು.</verse>
				<verse number="5">ಅದೇ ಸಮಯದಲ್ಲಿ ಒಬ್ಬ ಮನುಷ್ಯನ ಕೈಬೆರಳುಗಳು ಕಾಣಿಸಿಕೊಂಡು ದೀಪಸ್ತಂಭದ ಎದುರಿಗೆ ಅರಮನೆಯ ಸುಣ್ಣದ ಗೋಡೆಯ ಮೇಲೆ ಬರೆಯಲು ತೊಡಗಿದವು. ಬರೆಯುತ್ತಿದ್ದ ಆ ಕೈಯನ್ನು ರಾಜನು ನೋಡಿದನು.</verse>
				<verse number="6">ಅದನ್ನು ಕಂಡದ್ದೆ ಅವನ ಮುಖ ಕಳೆಗುಂದಿತು, ಮನಸ್ಸು ಕಳವಳಗೊಂಡಿತು, ಸೊಂಟದ ಕೀಲು ಸಡಿಲಗೊಂಡಿತು, ಮೊಣಕಾಲುಗಳು ಒಂದಕ್ಕೊಂದು ಬಡಿದುಕೊಂಡವು.</verse>
				<verse number="7">ಕೂಡಲೆ ರಾಜನು ಗಟ್ಟಿಯಾಗಿ ಕೂಗಿ ಮಂತ್ರವಾದಿ, ಪಂಡಿತ ಹಾಗು ಶಾಕುನಿಕರನ್ನು ಕರೆಯಿಸಿದನು. ಬಾಬಿಲೋನಿನ ಆ ವಿದ್ವಾಂಸರಿಗೆ, “ಯಾವನು ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ಕೆನ್ನೀಲಿ ರಾಜವಸ್ತ್ರವನ್ನು ತೊಡಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.</verse>
				<verse number="8">ಆಸ್ಥಾನದ ವಿದ್ವಾಂಸರೆಲ್ಲರು ಬಂದು ಸೇರಿದರು. ಆದರೆ ಆ ಬರಹವನ್ನು ಓದುವುದಕ್ಕಾಗಲಿ, ಅದರ ಅರ್ಥವನ್ನು ರಾಜನಿಗೆ ತಿಳಿಸುವುದಕ್ಕಾಗಲಿ ಅವರಿಂದ ಆಗಲಿಲ್ಲ.</verse>
				<verse number="9">ಆಗ ರಾಜ ಬೇಲ್ಶಚ್ಚರನು ಬಹಳ ಕಳವಳಗೊಂಡನು. ಅವನ ಮುಖ ಕಳೆಗುಂದಿತು. ಅವನ ಸಾಮಂತರು ದಿಕ್ಕುತೋಚದವರಾದರು.</verse>
				<verse number="10">ರಾಜನೂ ಅವನ ಸಾಮಂತರೂ ಆಡಿದ ಮಾತು ರಾಣಿಗೆ ಮುಟ್ಟಿತು. ಆಕೆ ಔತಣ ಶಾಲೆಗೆ ಬಂದು, “ರಾಜರೇ, ಚಿರಂಜೀವಿಯಾಗಿರಿ! ನಿಮ್ಮ ಮನಸ್ಸು ಕಳವಳಗೊಳ್ಳದಿರಲಿ, ನಿಮ್ಮ ಮುಖ ಕಳೆಗುಂದದಿರಲಿ! ಪರಿಶುದ್ಧ ದೇವರ ಆತ್ಮ ನೆಲೆಸಿರುವ ಒಬ್ಬ ವ್ಯಕ್ತಿ ನಿಮ್ಮ ರಾಜ್ಯದಲ್ಲಿದ್ದಾನೆ.</verse>
				<verse number="11">ನಿಮ್ಮ ತಂದೆಯ ಕಾಲದಲ್ಲಿ ಬುದ್ಧಿವಂತಿಕೆ, ತಿಳುವಳಿಕೆ, ದೇವರುಗಳಿಗೆ ಸಮಾನವಾದ ಜ್ಞಾನ ಅವನಲ್ಲಿ ಕಂಡುಬಂದುವು. ನಿಮ್ಮ ತಂದೆ ರಾಜ ನೆಬೂಕದ್ನೆಚ್ಚರನು, ಅವನನ್ನು ಜೋಯಿಸರಿಗೂ ಮಂತ್ರವಾದಿಗಳಿಗೂ ಪಂಡಿತರಿಗೂ ಶಾಕುನಿಕರಿಗೂ ಅಧ್ಯಕ್ಷನನ್ನಾಗಿ ನೇಮಿಸಿದ್ದರು.</verse>
				<verse number="12">ಹೌದು, ‘ಬೇಲ್ತೆಶಚ್ಚರ’ನೆಂಬ ಹೆಸರನ್ನು ರಾಜನಿಂದ ಹೊಂದಿದ ಆ ದಾನಿಯೇಲನು ಪರಮ ಬುದ್ಧಿವಂತ, ಜ್ಞಾನಿ, ವಿವೇಕಿ, ಕನಸುಗಳ ಅರ್ಥವನ್ನು ತಿಳಿಸುವ ಜಾಣತನ, ಒಗಟು ಬಿಡಿಸುವ ಚಮತ್ಕಾರ, ಗುಂಜುಗಂಟು ಬಿಚ್ಚುವ ಚಾತುರ್ಯ ಅವನಲ್ಲಿ ತೋರಿಬಂದವು. ಆದ್ದರಿಂದಲೇ ಅವನನ್ನು ಅಧ್ಯಕ್ಷನನ್ನಾಗಿ ನೇಮಿಸಲಾಯಿತು. ದಾನಿಯೇಲನನ್ನು ಈಗಲೇ ಕರೆಯಿಸಿರಿ. ಆತ ಬರಹದ ಅರ್ಥವನ್ನು ವಿವರಿಸುವನು,” ಎಂದಳು.</verse>
				<verse number="13">ಅಂತೆಯೇ, ದಾನಿಯೇಲನನ್ನು ರಾಜ ಸನ್ನಿಧಿಗೆ ಬರಮಾಡಲಾಯಿತು. ರಾಜನು ಅವನಿಗೆ: “ರಾಜನಾದ ನನ್ನ ತಂದೆ ಜುದೇಯದಿಂದ ಖೈದಿಯಾಗಿ ತಂದು ಸೆರೆಮಾಡಿದ ಯೆಹೂದ್ಯರಲ್ಲಿ ದಾನಿಯೇಲ್ ಎಂಬುವನು ನೀನೋ?</verse>
				<verse number="14">ದೇವರ ಆತ್ಮ ನಿನ್ನಲ್ಲಿ ನೆಲೆಸಿದೆಯೆಂದು ನಾನು ಕೇಳಿದ್ದೇನೆ. ನಿನಗೆ ಪರಮಜ್ಞಾನ, ವಿವೇಕ, ಬುದ್ಧಿ, ತೇಜಸ್ಸು ಇದೆಯೆಂದು ನನಗೆ ತಿಳಿದುಬಂದಿದೆ.</verse>
				<verse number="15">ಈಗ ಈ ಬರಹವನ್ನು ಓದಿ ಇದರ ಅರ್ಥವನ್ನು ನನಗೆ ತಿಳಿಸುವುದಕ್ಕಾಗಿ ವಿದ್ವಾಂಸರನ್ನೂ ಮಂತ್ರವಾದಿಗಳನ್ನೂ ಸಮ್ಮುಖಕ್ಕೆ ಬರಮಾಡಿದೆ. ಅವರು ಇದರ ಅರ್ಥವನ್ನು ವಿವರಿಸಲಾರದೆಹೋದರು.</verse>
				<verse number="16">ನೀನು ಗೂಡಾರ್ಥಗಳನ್ನು ವಿವರಿಸಬಲ್ಲವನೂ ಗುಂಜುಗಂಟುಗಳನ್ನು ಬಿಚ್ಚಬಲ್ಲವನೂ ಎಂಬ ಸಮಾಚಾರ ನನಗೆ ಮುಟ್ಟಿದೆ. ಈ ಬರಹವನ್ನು ಓದಿ, ಇದರ ಅಭಿಪ್ರಾಯವನ್ನು ನನಗೆ ತಿಳಿಸಿದೆಯಾದರೆ ನಿನಗೆ ಕೆನ್ನೀಲಿ ರಾಜವಸ್ತ್ರವನ್ನು ಹೊದಿಸಿ, ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು,” ಎಂದು ಹೇಳಿದನು.</verse>
				<verse number="17">ಆಗ ದಾನಿಯೇಲನು ರಾಜನಿಗೆ, “ಅರಸರೇ, ನಿಮ್ಮ ದಾನಗಳು ನಿಮಗೇ ಇರಲಿ. ನಿಮ್ಮ ಬಹುಮಾನಗಳು ಮತ್ತೊಬ್ಬನಿಗೆ ದೊರಕಲಿ. ಆದರೆ ನಾನು ಈ ಬರಹವನ್ನು ಓದಿ ಅದರ ಅರ್ಥವನ್ನು ತಮಗೆ ತಿಳಿಸುವೆನು.</verse>
				<verse number="18">ಪರಾತ್ಪರ ದೇವರು ನಿಮ್ಮ ತಂದೆಯಾದ ನೆಬೂಕದ್ನೆಚ್ಚರ್ ಅವರಿಗೆ ರಾಜ್ಯ ಮಹತ್ವವನ್ನು ಹಾಗೂ ಮಾನ ಸನ್ಮಾನಗಳನ್ನು ದಯಪಾಲಿಸಿದ್ದರು.</verse>
				<verse number="19">ಇಂಥ ಮಹತ್ವ ವರದ ನಿಮಿತ್ತ ಸಕಲ ದೇಶ-ಕುಲ-ಭಾಷೆಗಳವರು ಅವರ ಮುಂದೆ ಭಯದಿಂದ ನಡುಗುತ್ತಿದ್ದರು. ತಮಗೆ ಇಷ್ಟಬಂದ ಹಾಗೆ ಒಬ್ಬನನ್ನು ಬದುಕಿಸಿದರು, ಇನ್ನೊಬ್ಬನನ್ನು ಕೊಲ್ಲಿಸಿದರು. ಮನಸ್ಸಿಗೆ ಬಂದಹಾಗೆ ಒಬ್ಬನನ್ನು ಮೇಲೇರಿಸಿದರು, ಇನ್ನೊಬ್ಬನನ್ನು ಕೆಳಕ್ಕಿಳಿಸಿದರು.</verse>
				<verse number="20">ಹಾಗೆ ಅವರ ಎದೆ ಗರ್ವದಿಂದ ಉಬ್ಬಿಹೋಯಿತು. ಮನಸ್ಸಿಗೆ ಸೊಕ್ಕೇರಿಹೋಯಿತು. ಅವರನ್ನೂ ರಾಜಾಸ್ಥಾನದಿಂದ ತಳ್ಳಲಾಯಿತು. ಮಾನ ಕಳೆದುಹೋಯಿತು.</verse>
				<verse number="21">ಸಮಾಜದಿಂದ ಬಹಿಷ್ಕೃತರಾಗಿ, ಮೃಗಬುದ್ಧಿಯುಳ್ಳವರಾಗಿ, ಕಾಡುಕತ್ತೆಗಳ ನಡುವೆ ವಾಸಮಾಡಬೇಕಾಯಿತು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಅದನ್ನು ತಮಗೆ ಇಷ್ಟಬಂದವರಿಗೆ ಒಪ್ಪಿಸುತ್ತಾರೆ ಎಂಬುದನ್ನು ಅವರು ಗ್ರಹಿಸುವ ತನಕ ದನಗಳಂತೆ ಹುಲ್ಲುಮೇಯುವ ಗತಿ ಅವರದಾಯಿತು. ಆಕಾಶದ ಇಬ್ಬನಿ ಅವರ ಮೈಯನ್ನು ತೋಯಿಸುತ್ತಿತ್ತು.”</verse>
				<verse number="22">“ಬೇಲ್ಶಚ್ಚರರೇ, ಅವರ ಕುಮಾರರಾದ ತಾವು ಇದನ್ನೆಲ್ಲ ತಿಳಿದುಕೊಂಡಿದ್ದರೂ ದೀನ ಮನಸ್ಕರಾಗದೆ ಇದ್ದೀರಿ.</verse>
				<verse number="23">ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.</verse>
				<verse number="24">ಹೀಗಿರಲು, ಆ ಕೈಬೆರಳು ದೇವರ ಸನ್ನಿಧಿಯಿಂದ ಬಂದು ಬರೆದಿದೆ.”</verse>
				<verse number="25">“ಬರೆದಿರುವ ಮಾತುಗಳು ಇವು: ಮೆನೇ, ಮೆನೇ, ತೆಕೇಲ್, ಉಫರ್ಸಿನ್.”</verse>
				<verse number="26">ಇದರ ಅರ್ಥ ಹೀಗಿದೆ: “ಮೆನೇ” ಎಂದರೆ, ದೇವರು ನಿನ್ನ ಆಳ್ವಿಕೆಯ ಕಾಲಾವಧಿಯನ್ನು ಲೆಕ್ಕಿಸಿ ಕೊನೆಗಾಣಿಸಿದ್ದಾರೆ.</verse>
				<verse number="27">'ತೆಕೇಲ್’ ಎಂದರೆ ನಿನ್ನನ್ನು ತಕ್ಕಡಿಯಲ್ಲಿ ಹಾಕಿ ನೋಡಲು ನಿನ್ನ ತೂಕ ಕಡಿಮೆಯಾಗಿ ಕಂಡುಬಂದಿದೆ.</verse>
				<verse number="28">‘ಫರ್ಸಿನ್’ ಎಂದರೆ ನಿನ್ನ ರಾಜ್ಯವನ್ನು ವಿಭಾಗಮಾಡಿ ಮೇದ್ಯರಿಗೂ ಪರ್ಷಿಯದವರಿಗೂ ಕೊಡಲಾಗಿದೆ,” ಎಂದು ಅರಿಕೆಮಾಡಿದನು.</verse>
				<verse number="29">ತಕ್ಷಣವೇ ಬೇಲ್ಶಚ್ಚರನ ಆಜ್ಞೆಯ ಮೇರೆಗೆ ದಾನಿಯೇಲನಿಗೆ ಕೆನ್ನೀಲಿ ರಾಜವಸ್ತ್ರವನ್ನು ಹೊದಿಸಿದರು. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿದರು. ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ದಾನಿಯೇಲನು ಒಬ್ಬನಾದನು ಎಂದು ಪ್ರಕಟಿಸಿದರು.</verse>
				<verse number="30">ಅದೇ ರಾತ್ರಿ ಬಾಬಿಲೋನಿನ ರಾಜ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.</verse>
				<verse number="31">ಸುಮಾರು 62 ವಯಸ್ಸಿನ ಮೇದ್ಯನಾದ ದಾರ್ಯಾವೆಷನು ರಾಜ್ಯವನ್ನು ವಹಿಸಿಕೊಂಡನು.</verse>
			</chapter>
			<chapter number="6">
				<verse number="1">ರಾಜ್ಯಾಡಳಿತ ನಿರ್ವಹಣೆಗಾಗಿ ದಾರ್ಯಾವೆಷನು ನೂರಿಪ್ಪತ್ತು ಮಂದಿ ಪ್ರಾಂತ್ಯಾಧಿಪತಿಗಳನ್ನು ಆಯಾಯ ಪ್ರಾಂತ್ಯಗಳ ಮೇಲೆ ನೇಮಿಸಲು ತೀರ್ಮಾನಿಸಿದನು.</verse>
				<verse number="2">ಇವರ ಮೇಲ್ವಿಚಾರಣೆಗಾಗಿಯೂ ತನ್ನ ಹಿತಾಸಕ್ತಿಯ ದೃಷ್ಟಿಯಿಂದಲೂ ಮೂವರು ಮುಖ್ಯಾಧಿಕಾರಿಗಳನ್ನು ನೇಮಿಸಲು ನಿಶ್ಚಯಿಸಿದನು. ಈ ಮೂವರು ಮುಖ್ಯಸ್ಥರಲ್ಲಿ ದಾನಿಯೇಲನು ಒಬ್ಬನು.</verse>
				<verse number="3">ಈತ ಪರಮಜ್ಞಾನಿ. ಮಿಕ್ಕ ಮುಖ್ಯಾಧಿಕಾರಿಗಳಿಗಿಂತಲೂ ಅಧಿಪತಿಗಳಿಗಿಂತಲೂ ಹೆಚ್ಚು ಸಮರ್ಥನು. ಇವನನ್ನು ರಾಜನು ಸಮಸ್ತ ರಾಜ್ಯದ ಮೇಲ್ವಿಚಾರಕನನ್ನಾಗಿ ನೇಮಿಸಲು ಉದ್ದೇಶಿಸಿದ್ದನು.</verse>
				<verse number="4">ಹೀಗಿರಲು ಮುಖ್ಯಾಧಿಕಾರಿಗಳು ಮತ್ತು ಪ್ರಾಂತ್ಯಾಧಿಪತಿಗಳು ರಾಜ್ಯಾಡಳಿತದ ವಿಷಯವಾಗಿ ದಾನಿಯೇಲನ ಮೇಲೆ ತಪ್ಪುಹೊರಿಸುವುದಕ್ಕೆ ಸಂದರ್ಭ ಹುಡುಕುತ್ತಿದ್ದರು. ಆದರೆ ತಪ್ಪುಹೊರಿಸುವ ಯಾವ ಸಂದರ್ಭವೂ ದೊರಕಲಿಲ್ಲ. ಅವನಲ್ಲಿ ಯಾವ ತಪ್ಪನ್ನೂ ಕಾಣಲಾರದೆ ಹೋದರು. ಅವನು ಅಷ್ಟು ನಂಬಿಕಸ್ತನಾಗಿದ್ದನು! ಅವನಲ್ಲಿ ಯಾವ ಅಕ್ರಮವಾಗಲಿ, ಆಲಸ್ಯವಾಗಲಿ ಕಾಣಸಿಗಲಿಲ್ಲ.</verse>
				<verse number="5">ಆಗ ಆ ಅಧಿಕಾರಿಗಳು, “ಈ ದಾನಿಯೇಲನ ಮೇಲೆ ತಪ್ಪುಹೊರಿಸಬೇಕಾದರೆ ಇವನ ದೇವರ ಹಾಗೂ ಧರ್ಮದ ಮೂಲಕವೇ ಹೊರತು ಇನ್ನಾವುದರಲ್ಲೂ ನಮಗೆ ಅವಕಾಶ ದೊರಕದು,” ಎಂದುಕೊಂಡರು.</verse>
				<verse number="6">ಬಳಿಕ ಆ ಮುಖ್ಯಾಧಿಕಾರಿಗಳೂ ಪ್ರಾಂತ್ಯಾಧಿಪತಿಗಳೂ ರಾಜನ ಸಮ್ಮುಖದಲ್ಲಿ ಕೂಡಿಬಂದು ಅವನಿಗೆ, “ದಾರ್ಯಾವೆಷ ರಾಜರೇ, ಚಿರಂಜೀವಿಯಾಗಿರಿ!</verse>
				<verse number="7">ರಾಜ್ಯದ ಸಕಲ ಮುಖ್ಯಾಧಿಕಾರಿ, ನಾಯಕ, ಪ್ರಾಂತ್ಯಾಧಿಪತಿ, ಮಂತ್ರಿ, ಸಂಸ್ಥಾನಾಧ್ಯಕ್ಷರು ಇವರೆಲ್ಲರ ಅಭಿಪ್ರಾಯದ ಪ್ರಕಾರ ತಾವು ಒಂದು ಶಾಸನವನ್ನು ಹೊರಡಿಸಬೇಕು. ಯಾವನೂ ಮೂವತ್ತು ದಿನಗಳ ತನಕ ರಾಜರಾದ ತಮಗೆ ಹೊರತು ಬೇರೆ ಯಾವ ದೇವರಿಗಾಗಲಿ, ಮನುಷ್ಯನಿಗಾಗಲಿ ಪ್ರಾರ್ಥನೆ ಮಾಡಬಾರದು; ಮಾಡಿದರೆ ಸಿಂಹಗಳ ಗವಿಗೆ ಹಾಕಲಾಗುವುದು ಎಂದು ರಾಜಾಜ್ಞಾರೂಪವಾಗಿ ನಿಷೇಧಿಸುವುದು ಒಳ್ಳೆಯದು.</verse>
				<verse number="8">ರಾಜರೇ, ಈ ಶಾಸನಕ್ಕೆ ನೀವು ಇದೀಗಲೇ ಹಸ್ತಾಕ್ಷರಗಳಿಂದ ರುಜುಹಾಕಬೇಕು. ಆಗ ಅದು ಮೇದ್ಯದ ಮತ್ತು ಪರ್ಷಿಯದ ಧರ್ಮವಿಧಿಗಳಂತೆ ಎಂದಿಗೂ ರದ್ದಾಗದೆ ಊರ್ಜಿತವಾಗುವುದು,” ಎಂದು ವಿನಂತಿಸಿದರು.</verse>
				<verse number="9">ಅಂತೆಯೇ ರಾಜನಾದ ದಾರ್ಯಾವೆಷನು ರುಜುಹಾಕಿದನು.</verse>
				<verse number="10">ಶಾಸನಕ್ಕೆ ರುಜುವಾದ ವಿಷಯ ದಾನಿಯೇಲನಿಗೆ ತಿಳಿಯಿತು. ಆತ ತನ್ನ ಮನೆಗೆ ಹೊರಟುಹೋದನು. ಅಲ್ಲಿ ತನ್ನ ಮಹಡಿಯ ಕೊಠಡಿಯಲ್ಲಿನ ಕಿಟಕಿಗಳು ಜೆರುಸಲೇಮಿನ ಕಡೆಗೆ ತೆರೆದಿದ್ದವು. ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಅಲ್ಲಿ ತನ್ನ ದೇವರಿಗೆ ಮೊಣಕಾಲೂರಿ ಪ್ರಾರ್ಥಿಸಿ ಸ್ತೋತ್ರ ಸಲ್ಲಿಸುತ್ತಿದ್ದನು.</verse>
				<verse number="11">ದಾನಿಯೇಲನ ಆ ವಿರೋಧಿಗಳು ಗುಂಪಾಗಿ ಕೂಡಿಬಂದರು. ಆತ ತನ್ನ ದೇವರಿಗೆ ಅಭಿಮುಖವಾಗಿ ಪ್ರಾರ್ಥಿಸಿ ವಿಜ್ಞಾಪಿಸುವುದನ್ನು ಕಂಡರು.</verse>
				<verse number="12">ಕೂಡಲೆ ಆಸ್ಥಾನಕ್ಕೆ ಬಂದು ರಾಜಾಜ್ಞೆಯ ಪ್ರಸ್ತಾಪವನ್ನೆತ್ತಿ, “ರಾಜರೇ, ಯಾರೂ ಮೂವತ್ತು ದಿನಗಳ ತನಕ ತಮಗೆ ಹೊರತು ಬೇರೆ ಯಾವ ದೇವರಿಗಾಗಲಿ ಮನುಷ್ಯನಿಗಾಗಲಿ ಪ್ರಾರ್ಥನೆ ಮಾಡಕೂಡದು. ಮಾಡಿದರೆ ಅಂಥವನನ್ನು ಸಿಂಹಗಳ ಗವಿಯಲ್ಲಿ ಹಾಕಲಾಗುವುದು ಎಂಬ ಶಾಸನಕ್ಕೆ ನೀವು ರುಜುಹಾಕಿದಿರಲ್ಲವೆ?” ಎಂದು ಕೇಳಿದರು. ಅದಕ್ಕೆ ರಾಜನು, “ಹೌದು, ಮೇದ್ಯರ ಹಾಗು ಪರ್ಷಿಯರ ಧರ್ಮವಿಧಿಗಳಂತೆ ಅದು ಸ್ಥಿರವಾದ ನಿಬಂಧನೆ,” ಎಂದು ಉತ್ತರಕೊಟ್ಟನು.</verse>
				<verse number="13">ಆಗ ಅವರು ರಾಜಸನ್ನಿಧಿಯಲ್ಲಿ, “ರಾಜರೇ, ಜುದೇಯದಿಂದ ಸೆರೆಯಾಳುಗಳಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿಮ್ಮನ್ನಾಗಲಿ, ನಿಮ್ಮ ಹಸ್ತಾಕ್ಷರದ ರುಜುವಿರುವ ಶಾಸನವನ್ನಾಗಲಿ ಮಾನ್ಯಮಾಡುತ್ತಿಲ್ಲ.“ ಬದಲಿಗೆ ದಿನಕ್ಕೆ ಮೂರಾವರ್ತಿ ಪ್ರಾರ್ಥನೆ ಮಾಡುತ್ತಿದ್ದಾನೆ,” ಎಂದು ದೂರಿತ್ತರು.</verse>
				<verse number="14">ಆದರೆ ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡನು. ದಾನಿಯೇಲನನ್ನು ಈ ಇಕ್ಕಟ್ಟಿನಿಂದ ತಪ್ಪಿಸಲು ಮನಸ್ಸು ಮಾಡಿಕೊಂಡನು. ಆದರೆ ಹೇಗೆ ರಕ್ಷಿಸುವುದೆಂದು ಸೂರ್ಯಾಸ್ತಮದವರೆಗೂ ಆಲೋಚಿಸುತ್ತಾ ಇದ್ದನು.</verse>
				<verse number="15">ಇದನ್ನು ಅರಿತುಕೊಂಡ ಆ ಅಧಿಕಾರಿಗಳು ರಾಜಸನ್ನಿಧಿಗೆ ಮತ್ತೆ ಕೂಡಿಬಂದು, “ಪ್ರಭೂ, ರಾಜರು ವಿಧಿಸಿದ ಯಾವ ನಿಬಂಧನೆಯಾಗಲಿ, ಶಾಸನವಾಗಲಿ ರದ್ದಾಗಬಾರದು ಎಂಬ ಧರ್ಮಸೂತ್ರ ಮೇದ್ಯರಲ್ಲೂ ಪರ್ಷಿಯರಲ್ಲೂ ಉಂಟೆಂಬುದು ತಮಗೆ ತಿಳಿದಿರಬೇಕು,” ಎಂದರು.</verse>
				<verse number="16">ಈ ಕಾರಣ ರಾಜನು ಅಪ್ಪಣೆ ಕೊಡಲೇಬೇಕಾಯಿತು. ಕೂಡಲೆ ಅವರು ದಾನಿಯೇಲನನ್ನು ತಂದು ಸಿಂಹಗಳ ಗವಿಯಲ್ಲಿ ಹಾಕಿಯೇಬಿಟ್ಟರು. ಆಗ ರಾಜನು ದಾನಿಯೇಲನಿಗೆ, “ನೀನು ದಿನನಿತ್ಯವೂ ಆರಾಧಿಸುವ ದೇವರು ನಿನ್ನನ್ನು ಉದ್ಧರಿಸಲಿ!” ಎಂದು ಹರಸಿದನು.</verse>
				<verse number="17">ಆ ಅಧಿಕಾರಿಗಳಾದರೋ ಒಂದು ಬಂಡೆಯನ್ನು ತಂದು ಆ ಗವಿಯ ಬಾಯನ್ನು ಮುಚ್ಚಿದರು. ದಾನಿಯೇಲನ ಈ ಗತಿಯನ್ನು ಯಾರೂ ಬದಲಾಯಿಸಲಾಗದಂತೆ ರಾಜನ ಮತ್ತು ಅವನ ಮುಖಂಡರ ಮುದ್ರೆಯನ್ನು ಅದಕ್ಕೆ ಒತ್ತಿ ಮೊಹರು ಮಾಡಲಾಯಿತು.</verse>
				<verse number="18">ಬಳಿಕ ರಾಜನು ಅರಮನೆಗೆ ಹಿಂದಿರುಗಿದನು. ಆ ರಾತ್ರಿಯೆಲ್ಲಾ ಉಪವಾಸವಿದ್ದನು. ವಾದ್ಯ ವಿನೋದಾವಳಿ ಯಾವುದನ್ನೂ ಹತ್ತಿರಬರಲು ಬಿಡಲಿಲ್ಲ. ನಿದ್ರೆ ಅವನ ಕಣ್ಣುಗಳಿಂದ ಮಾಯವಾಯಿತು.</verse>
				<verse number="19">ಮಾರನೆಯ ದಿನ ಬೆಳಿಗ್ಗೆ ರಾಜನು ಉದಯದಲ್ಲೇ ಎದ್ದು ಸಿಂಹಗಳ ಗವಿಯ ಬಳಿಗೆ ವೇಗವಾಗಿ ಹೋದನು.</verse>
				<verse number="20">ದಾನಿಯೇಲನಿದ್ದ ಗವಿಯ ಸಮೀಪಕ್ಕೆ ಬಂದು, ದುಃಖ ಧ್ವನಿಯಿಂದ ದಾನಿಯೇಲನನ್ನು ಕೂಗಿ, “ದಾನಿಯೇಲನೇ, ಜೀವಸ್ವರೂಪನಾದ ದೇವರ ದಾಸನೇ, ನೀನು ದಿನನಿತ್ಯವೂ ಆರಾಧಿಸುವ ನಿನ್ನ ದೇವರಿಗೆ ನಿನ್ನನ್ನು ಸಿಂಹಗಳಿಂದ ಉದ್ಧರಿಸಲು ಸಾಧ್ಯವಾಯಿತೋ?” ಎಂದು ಕೇಳಿದನು.</verse>
				<verse number="21">ಆಗ ದಾನಿಯೇಲನು ರಾಜನಿಗೆ, “ಅರಸರೇ, ಚಿರಂಜೀವಿಯಾಗಿರಿ!</verse>
				<verse number="22">ನನ್ನ ದೇವರು ತಮ್ಮ ದೂತನನ್ನು ಕಳಿಸಿ, ಸಿಂಹಗಳ ಬಾಯನ್ನು ಬಂಧಿಸಿದರು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆ ದೇವರ ದೃಷ್ಟಿಯಲ್ಲಿ ನಾನು ನಿರ್ಮಲನು. ರಾಜರಾದ ತಮಗೂ ನಾನು ಯಾವ ದ್ರೋಹವನ್ನೂ ಮಾಡಲಿಲ್ಲ,” ಎಂದು ಹೇಳಿದನು.</verse>
				<verse number="23">ರಾಜನು ಇದನ್ನು ಕೇಳಿ ಬಹಳ ಸಂತೋಷಪಟ್ಟನು. ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆತ್ತಬೇಕೆಂದು ಅಪ್ಪಣೆಮಾಡಿದನು. ಅಂತೆಯೇ ಅವನನ್ನು ಮೇಲಕ್ಕೆತ್ತಲಾಯಿತು. ಆತನು ತನ್ನ ದೇವರಲ್ಲಿ ದೃಢವಾದ ವಿಶ್ವಾಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.</verse>
				<verse number="24">ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರು ಹೊರಿಸಿದವರನ್ನು ಮಡದಿಮಕ್ಕಳ ಸಮೇತ ತಂದು ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು. ಅವರು ಗವಿಯ ತಳಮುಟ್ಟುವುದರೊಳಗೆ ಸಿಂಹಗಳು ಅವರ ಮೇಲೆ ಹಾರಿ ಅವರ ಎಲುಬುಗಳನ್ನೆಲ್ಲ ಚೂರುಚೂರು ಮಾಡಿದವು.</verse>
				<verse number="25">ಇದಾದ ಮೇಲೆ ರಾಜ ದಾರ್ಯಾವೆಷನು ಜಗದಲ್ಲಿ ವಾಸಿಸುವ ಸಕಲ ದೇಶ-ಕುಲ-ಭಾಷೆಗಳವರಿಗೆ ಈ ಪ್ರಸಿದ್ಧ ಪತ್ರವನ್ನು ಬರೆಯಿಸಿದನು: ನಿಮಗೆ ಹೆಚ್ಚೆಚ್ಚು ಸುಖಶಾಂತಿ ಲಭಿಸಲಿ!”</verse>
				<verse number="26">ನನ್ನ ರಾಜ್ಯದ ಪ್ರಜೆಗಳೆಲ್ಲರಿಗೆ ನಾನು ಆಜ್ಞಾಪಿಸುವುದೇನೆಂದರೆ: ನೀವೆಲ್ಲರು ದಾನಿಯೇಲನ ದೇವರ ಮುಂದೆ ಭಯಭಕ್ತಿಯಿಂದ ನಡೆದುಕೊಳ್ಳತಕ್ಕದ್ದು. ಏಕೆಂದರೆ ಆತನೇ ಜೀವಸ್ವರೂಪನಾದ ಸನಾತನ ದೇವರು! ಆತನ ರಾಜ್ಯ ಎಂದೆಂದಿಗೂ ಅಳಿಯದು ಆತನ ಆಳ್ವಿಕೆ ಶಾಶ್ವತವಾದುದು!</verse>
				<verse number="27">ಆತ ಉದ್ಧರಿಸುವಂಥವನು, ರಕ್ಷಿಸುವಂಥವನು ಭೂಮ್ಯಾಕಾಶಗಳಲ್ಲಿ ಅದ್ಭುತ ಮಹತ್ವಗಳನ್ನು ನಡೆಸುವಂಥವನು! ಆತನೇ ದಾನಿಯೇಲನನ್ನು ಸಿಂಹಗಳ ಬಾಯಿಂದ ತಪ್ಪಿಸಿದವನು!</verse>
				<verse number="28">ಹೀಗೆ ಈ ದಾನಿಯೇಲನು ದಾರ್ಯಾವೆಷನ ಆಳ್ವಿಕೆಯಲ್ಲೂ ಪರ್ಷಿಯನಾದ ಸೈರೆಷನ ಆಳ್ವಿಕೆಯಲ್ಲೂ ಪ್ರವರ್ಧಿಸುತ್ತಾ ಬಾಳಿದನು.</verse>
			</chapter>
			<chapter number="7">
				<verse number="1">ಬಾಬಿಲೋನಿನ ಅರಸನಾದ ಬೇಲ್ಶಚ್ಚರನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ದಾನಿಯೇಲನು ಹಾಸಿಗೆಯ ಮೇಲೆ ಮಲಗಿದ್ದಾಗ ಒಂದು ಕನಸು ಕಂಡನು. ಅವನ ಮನಸ್ಸಿಗೆ ಒಂದು ದೃಶ್ಯ ಕಾಣಿಸಿತು. ಕೂಡಲೆ ಅವನು ಆ ಕನಸನ್ನೂ ಅದರ ಮುಖ್ಯಾಂಶಗಳನ್ನೂ ಬರೆದಿಟ್ಟನು.</verse>
				<verse number="2">ಅದರ ಸಾರಾಂಶ ಇದು: ನಾನು ರಾತ್ರಿ ಕಂಡ ಕನಸಿನಲ್ಲಿ ನಾಲ್ಕು ದಿಕ್ಕುಗಳಿಂದಲೂ ಗಾಳಿ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿತ್ತು.</verse>
				<verse number="3">ವಿಲಕ್ಷಣವಾದ ನಾಲ್ಕು ದೊಡ್ಡ ಮೃಗಗಳು ಆ ಸಾಗರದಿಂದ ಹೊರಗೆ ಬಂದವು.</verse>
				<verse number="4">ಮೊದಲು ಕಾಣಿಸಿದ ಮೃಗ ಸಿಂಹದ ಹಾಗಿತ್ತು. ಆದರೆ ಅದಕ್ಕೆ ಹದ್ದಿನಂಥ ರೆಕ್ಕೆಗಳಿದ್ದವು. ನಾನು ನೋಡುತ್ತಿರುವಾಗಲೆ ಆ ರೆಕ್ಕೆಗಳು ಕೀಳಲ್ಪಟ್ಟವು. ಆ ಮೃಗವನ್ನು ನೆಲದಿಂದ ಮೇಲಕ್ಕೆತ್ತಿ ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲಾಯಿತು. ಅದಕ್ಕೆ ಮನುಷ್ಯನ ಹೃದಯ ಕೊಡಲಾಯಿತು.</verse>
				<verse number="5">ಬಳಿಕ ಎರಡನೆಯ ಇನ್ನೊಂದು ಮೃಗವನ್ನು ಕಂಡೆ. ಅದು ಕರಡಿಯ ಹಾಗಿತ್ತು. ಒಂದು ಹೆಗಲನ್ನು ಮೇಲಕ್ಕೆ ಎತ್ತಿಕೊಂಡಿತ್ತು. ತನ್ನ ಬಾಯಲ್ಲಿನ ಹಲ್ಲುಗಳ ನಡುವೆ ಮೂರು ಪಕ್ಕೆಲುಬುಗಳನ್ನು ಕಚ್ಚಿಕೊಂಡಿತ್ತು. “ನೀನೆದ್ದು ಬೇಕಾದಷ್ಟು ಮಾಂಸವನ್ನು ತಿನ್ನು,” ಎಂದು ಅದಕ್ಕೆ ಹೇಳಲಾಯಿತು.</verse>
				<verse number="6">ಅನಂತರ ನಾನು ನೋಡುತ್ತಿರುವಾಗಲೆ ಚಿರತೆಯ ಹಾಗಿದ್ದ ಮತ್ತೊಂದು ಮೃಗ ಕಾಣಿಸಿತು. ಅದರ ಪಕ್ಕಗಳಲ್ಲಿ ಪಕ್ಷಿಯ ರೆಕ್ಕೆಗಳಂತಿರುವ ನಾಲ್ಕು ರೆಕ್ಕೆಗಳಿದ್ದವು. ಆ ಮೃಗಕ್ಕೆ ನಾಲ್ಕು ತಲೆಗಳಿದ್ದವು. ಅದಕ್ಕೆ ದೊರೆತನ ಕೊಡಲಾಯಿತು.</verse>
				<verse number="7">ಇದಾದ ಬಳಿಕ ಆ ರಾತ್ರಿ ಕನಸಿನಲ್ಲಿ ಕಾಣಿಸಿಕೊಂಡ ನಾಲ್ಕನೇ ಮೃಗ ಭಯಂಕರವಾಗಿತ್ತು. ಹೆದರಿಸುವಂಥದಾಗಿತ್ತು. ಅಧಿಕ ಬಲವುಳ್ಳದ್ದಾಗಿತ್ತು. ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತನ್ನ ಬಲಿಯನ್ನು ತುಂಡುತುಂಡಾಗಿಸಿ ಕಬಳಿಸುತ್ತಿತ್ತು. ಮಿಕ್ಕದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು. ಅದು ಮುಂಚಿನ ಮೃಗಗಳಿಗಿಂತ ವಿಲಕ್ಷಣವಾಗಿತ್ತು. ಅದಕ್ಕೆ ಹತ್ತು ಕೊಂಬುಗಳಿದ್ದವು.</verse>
				<verse number="8">ನಾನು ಆ ಕೊಂಬುಗಳನ್ನು ಗಮನಿಸುತ್ತಿರುವಾಗಲೆ ಅವುಗಳ ನಡುವೆ ಇಗೋ ಇನ್ನೊಂದು ಚಿಕ್ಕ ಕೊಂಬು ಮೊಳೆಯಿತು. ಅದಕ್ಕೆ ಎಡೆಮಾಡಿಕೊಡಲು ಮುಂಚಿನ ಕೊಂಬುಗಳಲ್ಲಿ ಮೂರನ್ನು ಬೇರುಸಹಿತ ಕೀಳಲಾಯಿತು. ಆಶ್ಚರ್ಯವೆಂದರೆ, ಆ ಕೊಂಬಿನಲ್ಲಿ ಮನುಷ್ಯನ ಕಣ್ಣುಗಳಂತಿರುವ ಕಣ್ಣುಗಳಿದ್ದವು. ಬಡಾಯಿ ಕೊಚ್ಚಿಕೊಳ್ಳುವ ಬಾಯೂ ಇತ್ತು.</verse>
				<verse number="9">ನಾನು ನೋಡುತ್ತಿದ್ದ ಹಾಗೆ: ಸಿಂಹಾಸನಗಳನ್ನು ಹಾಕಲಾಯಿತು. ಮಹಾವೃದ್ಧನೊಬ್ಬನು ಆಸೀನನಾದನು. ಆತನ ಉಡುಪು ಬೆಳ್ಳಗಿತ್ತು ಹಿಮದಂತೆ. ಆತನ ತಲೆಗೂದಲಿತ್ತು ನಿರ್ಮಲವಾದ ಬಿಳಿಯ ಉಣ್ಣೆಯಂತೆ. ಆತನ ಸಿಂಹಾಸನ ಅಗ್ನಿಜ್ವಾಲೆಗಳು. ಧಗಧಗಿಸುವ ಬೆಂಕಿ ಅದರ ಚಕ್ರಗಳು.</verse>
				<verse number="10">ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು.</verse>
				<verse number="11">ನಾನು ನೋಡುತ್ತಾ ಇದ್ದೆ: ಆ ಕಿರುಕೊಂಬು ಬಡಾಯಿಕೊಚ್ಚಿಕೊಂಡ ನಿಮಿತ್ತ ಆ ಕೊಂಬಿನ ಮೃಗವನ್ನು ಕೊಂದು ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.</verse>
				<verse number="12">ಮಿಕ್ಕ ಮೃಗಗಳ ದೊರೆತನವನ್ನು ತೆಗೆದುಬಿಟ್ಟರು. ಆದರೆ ಕೆಲವು ಕಾಲದ ಮಟ್ಟಿಗೆ, ತಕ್ಕ ಸಮಯ ಬರುವ ತನಕ, ಅವುಗಳ ಜೀವಾವಧಿಯನ್ನು ಉಳಿಸಿದರು.</verse>
				<verse number="13">ನಾನು ಕಂಡ ರಾತ್ರಿಯ ಕನಸಿನಲ್ಲಿ ನರಪುತ್ರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು. ಅವನನ್ನು ಆತನ ಸನ್ನಿಧಿಗೆ ತಂದರು.</verse>
				<verse number="14">ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!</verse>
				<verse number="15">ದಾನಿಯೇಲನಾದ ನನ್ನ ಮನ ಒಳಗೇ ವ್ಯಥೆಗೊಂಡಿತು. ನನ್ನ ಮನಸ್ಸಿನಲ್ಲಿ ತೋಚಿದ ದರ್ಶನಗಳು ನನ್ನನ್ನು ಕಳವಳಪಡಿಸಿದವು.</verse>
				<verse number="16">ಹತ್ತಿರದಲ್ಲೆ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋಗಿ ಇವುಗಳ ಸರಿಯಾದ ಅರ್ಥ ಏನೆಂದು ವಿಚಾರಿಸಿದೆ.</verse>
				<verse number="17">ಅವನು ನನಗೆ: “ಆ ನಾಲ್ಕು ದೊಡ್ಡ ಮೃಗಗಳು ಲೋಕಸಾಗರಗಳಿಂದ ಏರತಕ್ಕ ನಾಲ್ಕು ರಾಜ್ಯಗಳು.</verse>
				<verse number="18">ಆದರೆ ರಾಜ್ಯಾಧಿಕಾರ ಲಭಿಸುವುದು ಮಹೋನ್ನತರ ಪವಿತ್ರ ಪ್ರಜೆಗೆ. ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವವರು ಅವರೇ,” ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.</verse>
				<verse number="19">ಅದಾದ ಮೇಲೆ ಇತರ ಮೃಗಗಳಿಗಿಂತ ವಿಲಕ್ಷಣವಾಗಿಯೂ ಅತಿಭಯಂಕರವಾಗಿಯೂ ಕಬ್ಬಿಣದ ಹಲ್ಲು, ಕಂಚಿನ ಉಗುರು ಉಳ್ಳದ್ದಾಗಿಯೂ ತನ್ನ ಬಲಿಯನ್ನು ತುಂಡುತುಂಡಾಗಿಸಿ ಕಬಳಿಸುತ್ತಿದ್ದ ಹಾಗು ಮಿಕ್ಕದ್ದನ್ನು ಕಾಲಿನಿಂದ ತುಳಿಯುತ್ತಿದ್ದ ಆ ನಾಲ್ಕನೆಯ ಮೃಗದ ವಿಷಯವನ್ನು ತಿಳಿದುಕೊಳ್ಳಲು ಬಯಸಿದೆ.</verse>
				<verse number="20">ಅದರ ತಲೆಯ ಮೇಲಿದ್ದ ಹತ್ತು ಕೊಂಬುಗಳ ವಿಷಯವಾಗಿಯೂ,</verse>
				<verse number="21">ನಾನು ನೋಡುತ್ತಿದ್ದ ಹಾಗೆ ಯಾವ ಕೊಂಬು ಮೊಳೆತು ಮೂರು ಕೊಂಬುಗಳನ್ನು ಬೀಳಿಸಿ, ತನ್ನಲ್ಲೆ ಕಣ್ಣುಳ್ಳದ್ದಾಗಿ ಬಡಾಯಿ ಕೊಚ್ಚಿಕೊಳ್ಳುವ ಬಾಯುಳ್ಳದ್ದಾಗಿ, ಮಿಕ್ಕ ಕೊಂಬುಗಳಿಗಿಂತ ಭಯಂಕರವಾಗಿ ಕಾಣಿಸುತ್ತಾ ಇತ್ತೋ, ಆ ಕೊಂಬಿನ ವಿಷಯವಾಗಿ ಸತ್ಯಾರ್ಥವನ್ನೂ ತಿಳಿದುಕೊಳ್ಳಬೇಕೆಂದು ವಿಚಾರಿಸಿದೆ.</verse>
				<verse number="22">ಆ ಕೊಂಬು ಪವಿತ್ರ ಪ್ರಜೆಯೊಂದಿಗೆ ಯುದ್ಧಮಾಡುತ್ತಿತ್ತು. ಮಹಾವೃದ್ಧನು ಬಂದು ಮಹೋನ್ನತರ ಆ ಪವಿತ್ರ ಪ್ರಜೆಗೆ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದಿತ್ತು.</verse>
				<verse number="23">ಆಗ ಅವನು ನನಗೆ ಕೊಟ್ಟ ವಿವರ ಇದು: “ಆ ನಾಲ್ಕನೆಯ ಮೃಗ ಲೋಕದಲ್ಲಿ ತಲೆಯೆತ್ತುವ ನಾಲ್ಕನೆಯ ರಾಜ್ಯ. ಅದು ಮಿಕ್ಕ ರಾಜ್ಯಗಳಿಗಿಂತ ವಿಲಕ್ಷಣವಾದುದು. ಲೋಕವನ್ನೇ ಕಾಲಿನಿಂದ ತುಳಿದು ಚೂರುಚೂರು ಮಾಡಿ ಕಬಳಿಸುವುದು.</verse>
				<verse number="24">ಆ ಹತ್ತು ಕೊಂಬುಗಳು ಅದೇ ರಾಜ್ಯವನ್ನು ಆಳುವ ಹತ್ತುಮಂದಿ ಅರಸರು. ಅವರ ತರುವಾಯ ಮತ್ತೊಬ್ಬನು ತಲೆದೋರುವನು. ಅವನು ಮುಂಚಿನ ಅರಸರಿಗಿಂತ ವಿಲಕ್ಷಣವಾಗಿರುವನು, ಆ ಮೂವರು ಅರಸರನ್ನು ಸದೆಬಡಿದುಬಿಡುವನು.</verse>
				<verse number="25">ಅವನು ಮಹೋನ್ನತ ದೇವರಿಗೆ ವಿರುದ್ಧವಾಗಿ ಕೊಚ್ಚಿಕೊಳ್ಳುವನು. ಮಹೋನ್ನತರ ಪವಿತ್ರ ಪ್ರಜೆಯನ್ನು (ಸಂತರನ್ನು) ಶೋಷಣೆಗೆ ಗುರಿಮಾಡುವನು. ಆ ಪ್ರಜೆ ಅವನಿಗೆ ಮೂರುವರೆ ವರ್ಷ ಅಧೀನರಾಗಿರುವರು.</verse>
				<verse number="26">ಆದರೆ (ದೇವರ) ನ್ಯಾಯಸಭೆ ತೀರ್ಪಿತ್ತು, ಅವನ ದೊರೆತನವನ್ನು ಕಿತ್ತು, ವಿನಾಶಮಾಡಿ, ಕೊನೆಗಾಣಿಸಿಬಿಡುವುದು.</verse>
				<verse number="27">ರಾಜ್ಯಭಾರವೂ ದೊರೆತನವೂ ಸಮಸ್ತ ಲೋಕದಲ್ಲಿನ ರಾಜ್ಯಗಳ ಮಹಿಮೆಯೂ ಮಹೋನ್ನತರ ಭಕ್ತಜನರಿಗೆ ಕೊಡಲಾಗುವುದು. ಅವರ ರಾಜ್ಯ ಶಾಶ್ವತರಾಜ್ಯ. ಎಲ್ಲ ದೇಶಾಧಿಪತಿಗಳೂ ಅವರಿಗೆ ಅಧೀನರಾಗಿ ಸೇವೆಮಾಡುವರು,” ಎಂದು ಹೇಳಿದನು.</verse>
				<verse number="28">ಇಲ್ಲಿಗೆ ಆ ಕನಸಿನ ವಿವರ ಮುಗಿಯಿತು. ದಾನಿಯೇಲನಾದ ನಾನು ನನ್ನ ಆಲೋಚನೆಗಳಿಂದ ಬಹಳ ಕಳವಳಗೊಂಡೆ. ನನ್ನ ಮುಖ ಬಾಡಿತು. ಆದರೂ ನಡೆದ ಸಂಗತಿಯನ್ನು ಮನಸ್ಸಿನಲ್ಲೇ ಇಟ್ಟುಕೊಂಡೆ.</verse>
			</chapter>
			<chapter number="8">
				<verse number="1">ಮೊದಲು ನನಗೆ ಕಾಣಿಸಿದ ಕನಸಲ್ಲದೆ, ಅರಸ ಬೇಲ್ಶಚ್ಚರನ ಆಳ್ವಿಕೆಯ ಮೂರನೇ ವರ್ಷದಲ್ಲಿ ದಾನಿಯೇಲನಾದ ನನಗೆ ಇನ್ನೊಂದು ಕನಸು ಕಾಣಿಸಿತು.</verse>
				<verse number="2">ಈ ಕನಸಿನಲ್ಲಿ ಏಲಾಮ್ ಸಂಸ್ಥಾನದ ಶೂಷನ್ ಕೋಟೆಯಲ್ಲಿ ನಾನಿದ್ದೆ. ಊಲಾ ಕಾಲುವೆಯ ದಡದ ಮೇಲೆ ನಾನು ನಿಂತುಕೊಂಡಿದ್ದ ಹಾಗೆ ತೋರಿತು.</verse>
				<verse number="3">ಕಣ್ಣೆತ್ತಿ ನೋಡಿದಾಗ ಎರಡು ಕೊಂಬಿನ ಒಂದು ಟಗರು ಕಾಲುವೆಯ ಹತ್ತಿರ ನಿಂತಿದ್ದು ಕಾಣಿಸಿತು. ಅದರ ಎರಡು ಕೊಂಬುಗಳು ಉದ್ದವಾಗಿದ್ದರೂ ಒಂದಕ್ಕಿಂತ ಒಂದು ದೊಡ್ಡದಾಗಿತ್ತು. ಆ ದೊಡ್ಡದು ಮೊಳೆತದ್ದು ಚಿಕ್ಕ ಕೊಂಬು ಮೊಳೆತ ಮೇಲೆ.</verse>
				<verse number="4">ನಾನು ನೋಡುತ್ತಿದ್ದ ಹಾಗೆ ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿತ್ತು. ಯಾವ ಪ್ರಾಣಿಯೂ ಅದರ ಎದುರಿಗೆ ನಿಲ್ಲಲಾರದೆಹೋಯಿತು. ಅದರ ಕೈಯಿಂದ ಬಿಡಿಸಲು ಯಾವ ಮೃಗಕ್ಕೂ ಶಕ್ತಿಯಿರಲಿಲ್ಲ. ಅದು ಇಷ್ಟಬಂದಂತೆ ನಡೆದು ತನ್ನ ಶಕ್ತಿಯನ್ನು ಹೆಚ್ಚಿಸಿಕೊಂಡಿತ್ತು.</verse>
				<verse number="5">ನಾನು ಅದನ್ನು ಗಮನಿಸುತ್ತಿರುವಾಗಲೇ ಹೋತವೊಂದು ಪಶ್ಚಿಮದಿಂದ ಹೊರಟುಬಂದಿತು. ಅದು ಜಗವೆಲ್ಲವನ್ನು ದಾಟಿಕೊಂಡು ನೆಲವನ್ನು ಸೋಕದೆ, ಅಲ್ಲಿಗೆ ಧಾವಿಸಿತು. ಅದರ ಕಣ್ಣುಗಳ ನಡುವೆ ವಿಶೇಷವಾದ ಒಂದು ಕೊಂಬಿತ್ತು.</verse>
				<verse number="6">ನಾನು ಕಾಲುವೆಯ ಹತ್ತಿರ ಕಂಡ ಎರಡು ಕೊಂಬಿನ ಟಗರಿನ ಬಳಿಗೆ ಆ ಹೋತ ಓಡಿತು. ಪರಾಕ್ರಮದಿಂದ ಉಬ್ಬಿ, ರೋಷಗೊಂಡು, ಅದರ ಮೇಲೆ ಬೀಳಬೇಕೆಂದು ದೌಡಾಯಿಸಿತು.</verse>
				<verse number="7">ಆ ಟಗರನ್ನು ಸಮೀಪಿಸುವುದನ್ನು ನಾನು ಗಮನಿಸಿದೆ. ಟಗರಿನ ವಿರುದ್ಧ ಮಹಾರೌದ್ರದಿಂದ ಉರಿಯುತ್ತಾ ಅದರ ಮೇಲೆ ಎರಗಿ ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದನ್ನು ಎದುರಿಸುವ ಶಕ್ತಿ ಯಾವುದೂ ಆ ಟಗರಿಗೆ ಇರಲಿಲ್ಲ. ಹೋತ ಟಗರನ್ನು ನೆಲಕ್ಕೆ ಕೆಡವಿ ತುಳಿದುಹಾಕಿತು. ಅದರ ಕೈಯಿಂದ ಟಗರನ್ನು ಬಿಡಿಸುವ ಪ್ರಾಣಿ ಯಾವುದೂ ಇರಲಿಲ್ಲ.</verse>
				<verse number="8">ಆ ಹೋತಕ್ಕೆ ಅತ್ಯಧಿಕ ಹುಮ್ಮಸ್ಸು ಬಂದಿತು. ಆದರೆ ಅದು ಪ್ರಾಬಲ್ಯಕ್ಕೆ ಬರುವಾಗಲೇ ಅದರ ದೊಡ್ಡ ಕೊಂಬು ಮುರಿದುಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಪ್ರಸಿದ್ಧ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೂ ಚಾಚಿಕೊಂಡವು.</verse>
				<verse number="9">ಅವುಗಳೊಳಗೆ ಒಂದರಲ್ಲಿ ಒಂದು ಚಿಕ್ಕ ಕೊಂಬು ಮೊಳೆತು, ಬಹುದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ಚೆಲುವಿನ ನಾಡಾದ ಪಾಲೆಸ್ತೀನಿನ ಕಡೆಗೂ ಪ್ರಬಲಗೊಂಡಿತು.</verse>
				<verse number="10">ಅದು ನಕ್ಷತ್ರ ಗಣದ ಮೇಲೆ ಕೈಮಾಡುವಷ್ಟು ಹೆಚ್ಚಿ ಆ ಗಣದ ಕೆಲವು ನಕ್ಷತ್ರಗಳನ್ನೂ ನೆಲಕ್ಕೆ ಕೆಡವಿ ತುಳಿದುಬಿಟ್ಟಿತು.</verse>
				<verse number="11">ಅದು ಮಾತ್ರವಲ್ಲ, ಆ ನಕ್ಷತ್ರಗಣದ ಅಧಿಪತಿಯನ್ನೇ ಎದುರಿಸುವಷ್ಟು ಉಬ್ಬಿಹೋಗಿ ಅನುದಿನದ ಬಲಿಯರ್ಪಣೆ ಆತನಿಗೆ ಸಲ್ಲದಂತೆ ಮಾಡಿತು.</verse>
				<verse number="12">ಆತನ ಪವಿತ್ರಾಲಯವನ್ನು ಕೆಡವಿತು. ಅನುದಿನದ ಬಲಿಯರ್ಪಣೆಯನ್ನು ಅಡಗಿಸುವುದಕ್ಕಾಗಿ ನೀಚತನದಿಂದ ಒಂದು ಸೈನ್ಯವನ್ನೆಬ್ಬಿಸಿತು. ಸತ್ಯಧರ್ಮವನ್ನು ನೆಲಕ್ಕೆ ದೊಬ್ಬಿತು. ತನ್ನ ಇಷ್ಟಾರ್ಥವನ್ನು ಈಡೇರಿಸಿಕೊಂಡು ವೃದ್ಧಿಗೆ ಬಂದಿತು.</verse>
				<verse number="13">ಆಗ ಒಬ್ಬ ದೇವದೂತನು ಮಾತಾಡುವುದು ನನಗೆ ಕೇಳಿಸಿತು. ಮಾತಾಡುವವನನ್ನು ಮತ್ತೊಬ್ಬ ದೇವದೂತನು ಸಂಬೋಧಿಸಿ: “ಅನುದಿನದ ಬಲಿಯರ್ಪಣೆಯನ್ನು ನಿಲ್ಲಿಸುವುದು, ಭಯಂಕರವಾದ ದೇವದ್ರೋಹ ಮಾಡುವುದು, ಪವಿತ್ರಾಲಯವನ್ನೂ ದೇವಭಕ್ತಗಣವನ್ನೂ ತುಳಿಯುವುದೂ-ಕನಸಿನ ಇಂಥಾ ಕಾರ್ಯಗಳು ಎಷ್ಟುಕಾಲ ನಡೆಯುವುವು?” ಎಂದು ಪ್ರಶ್ನೆಮಾಡಿದನು.</verse>
				<verse number="14">ಅವನು ಇವನಿಗೆ, “ಉದಯಾಸ್ತಮಾನಗಳ ಎರಡು ಸಾವಿರದ ಮುನ್ನೂರರವರೆಗೆ ನಡೆಯುವುವು. ಅನಂತರ ಪವಿತ್ರಾಲಯಕ್ಕೆ ಪುನಃ ನ್ಯಾಯಸ್ಥಾಪನೆ ಆಗುವುದು,” ಎಂದು ಹೇಳಿದನು.</verse>
				<verse number="15">ದಾನಿಯೇಲನಾದ ನಾನು ಈ ಕನಸನ್ನು ಕಂಡು ಅದನ್ನು ಗ್ರಹಿಸಲು ಪ್ರಯತ್ನಿಸುತ್ತಿರುವಾಗ ತಟ್ಟನೆ ಮನುಷ್ಯ ರೂಪಹೊಂದಿದ ಒಬ್ಬನು ನನ್ನೆದುರಿಗೆ ನಿಂತನು.</verse>
				<verse number="16">ಆಗ, “ಗಬ್ರಿಯೇಲನೇ, ಕನಸಿನ ಅರ್ಥವನ್ನು ಇವನಿಗೆ ತಿಳಿಯಪಡಿಸು,” ಎಂದು ಮನುಷ್ಯ ಧ್ವನಿಯಂಥ ಒಂದು ವಾಣಿ ಊಲಾ ಕಾಲುವೆಯ ನಡುವೆ ನನಗೆ ಕೇಳಿಸಿತು.</verse>
				<verse number="17">ಅದರಂತೆ ಅವನು ನನ್ನ ಹತ್ತಿರಕ್ಕೆ ಬಂದನು. ನಾನು ಭಯಭ್ರಾಂತನಾಗಿ ಅಡ್ಡಬಿದ್ದೆ. ನನಗೆ ಅವನು, “ನರಪುತ್ರನೇ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು ಎಂಬುದು ನಿನಗೆ ಮನದಟ್ಟಾಗಿರಲಿ;” ಎಂದು ಹೇಳಿದನು.</verse>
				<verse number="18">ಅವನು ನನ್ನೊಡನೆ ಮಾತಾಡುತ್ತಿರುವಾಗ ನಾನು ಮೈಮರೆತು ಅಧೋಮುಖವಾಗಿ ಬಿದ್ದಿದ್ದೆ. ಆಗ ಅವನು ನನ್ನನ್ನು ಮುಟ್ಟಿ, ನಿಲ್ಲಿಸಿ ನನಗೆ:</verse>
				<verse number="19">“ದೇವರು ತಮ್ಮ ಕೋಪವನ್ನು ತೀರಿಸುವ ಮುಂದಿನ ಕಾಲದಲ್ಲಿ ನಡೆಯತಕ್ಕದ್ದನ್ನು ನಿನಗೆ ತಿಳಿಸುತ್ತೇನೆ ಕೇಳು - ಅದು ನಿಯಮಿತ ಅಂತ್ಯಕಾಲಕ್ಕೆ ಸಂಬಂಧಪಟ್ಟದ್ದು.”</verse>
				<verse number="20">“ನೀನು ನೋಡಿದ ಎರಡು ಕೊಂಬಿನ ಟಗರು ಮೇದ್ಯದ ಮತ್ತು ಪರ್ಷಿಯದ ರಾಜ್ಯ.</verse>
				<verse number="21">ಆ ಹೋತ ಗ್ರೀಕ್ ರಾಜ್ಯ. ಅದರ ಕಣ್ಣುಗಳ ನಡುವಣ ದೊಡ್ಡ ಕೊಂಬು ಆ ರಾಜ್ಯದ ಮೊದಲನೆಯ ರಾಜ.</verse>
				<verse number="22">ಆ ಕೊಂಬು ಮುರಿದುಹೋದ ಮೇಲೆ ಅದರ ಸ್ಥಾನದಲ್ಲಿ ನಾಲ್ಕು ಕೊಂಬುಗಳು ಎದ್ದಂತೆಯೆ ಆ ಜನಾಂಗದಿಂದ ನಾಲ್ಕು ರಾಜ್ಯಗಳು ಏಳುವುವು. ಆದರೆ ಮೊದಲನೇ ರಾಜನಿಗೆ ಇದ್ದಷ್ಟು ಶಕ್ತಿ ಅವುಗಳಿಗೆ ಇರುವುದಿಲ್ಲ.</verse>
				<verse number="23">ಆ ರಾಜ್ಯಗಳ ಕಡೆಯಕಾಲ ಬಂದಾಗ, ಅಧರ್ಮಿಗಳ ಅಪರಾಧ ಭರ್ತಿಯಾದಾಗ, ಕ್ರೂರ ಮುಖನೂ ಕುತಂತ್ರ ವಚನ ನಿಪುಣನೂ ಆದ ಒಬ್ಬ ರಾಜನು ತಲೆದೋರುವನು.</verse>
				<verse number="24">ಅವನು ಪ್ರಬಲನಾಗುವನು, ಆದರೆ ಸ್ವಬಲದಿಂದಲ್ಲ. ಅತ್ಯಧಿಕವಾಗಿ ಹಾಳುಮಾಡಿ, ಅಭಿವೃದ್ಧಿಯಾಗುವನು. ತನ್ನ ಇಷ್ಟಾರ್ಥವನ್ನು ತೀರಿಸಿಕೊಳ್ಳುವನು. ಬಲಿಷ್ಠರನ್ನೂ ದೇವಜನರನ್ನೂ ಧ್ವಂಸಮಾಡುವನು.</verse>
				<verse number="25">ಯುಕ್ತಿಯಿಂದಲೆ ತನ್ನ ಕಪಟತನವನ್ನು ಸಿದ್ಧಿಗೆ ತರುವನು. ಮನದಲ್ಲೆ ಉಬ್ಬಿಕೊಂಡು ನೆಮ್ಮದಿಯಾಗಿರುವ ಬಹುಜನರನ್ನು ನಾಶಪಡಿಸುವನು. ರಾಜಾಧಿರಾಜನಿಗೂ ವಿರುದ್ಧವಾಗಿ ಏಳುವನು. ಆದರೂ ಯಾರ ಕೈಯೂ ಸೋಕದೆ ಹಾಳಾಗುವನು.</verse>
				<verse number="26">ಕನಸಿನಲ್ಲಿ ತಿಳಿಸಲಾದ ಉದಯಾಸ್ತಮಾನಗಳ ವಿಷಯ ನಿಜವೇ ಸರಿ. ಆದರೆ ಆ ಕನಸು ಗುಟ್ಟಾಗಿರಲಿ. ಅದು ಬಹುದೂರದ ಕಾಲದ್ದು,” ಎಂದು ಹೇಳಿದನು.</verse>
				<verse number="27">ದಾನಿಯೇಲನಾದ ನಾನು ಮೂರ್ಛೆಗೊಂಡೆ. ಕೆಲವು ದಿವಸ ಕಾಯಿಲೆ ಬಿದ್ದೆ. ಆಮೇಲೆ ಎದ್ದು ರಾಜಕಾರ್ಯವನ್ನು ಆರಂಭಿಸಿದೆ. ಆದರೂ ಆ ಕನಸಿಗೆ ಬೆಚ್ಚಿಬೆರಗಾದೆ. ಅದರ ಅರ್ಥವನ್ನು ಗ್ರಹಿಸಿಕೊಳ್ಳಲಾಗಲಿಲ್ಲ.</verse>
			</chapter>
			<chapter number="9">
				<verse number="1">ಅದು, ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷ. ಈತನು ಅಹಷ್ವೇರೋಷನ ಮಗ, ಮೇದ್ಯ ವಂಶದವನು ಹಾಗು ಬಾಬಿಲೋನಿನ ರಾಜ್ಯದ ದೊರೆ.</verse>
				<verse number="2">ದಾನಿಯೇಲನಾದ ನಾನು ಪವಿತ್ರಗ್ರಂಥಗಳನ್ನು ಪರೀಕ್ಷಿಸಿ, ಸರ್ವೇಶ್ವರಸ್ವಾಮಿ ಪ್ರವಾದಿ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯಾನುಸಾರ ಜೆರುಸಲೇಮ್ ಪಾಳುಬಿದ್ದಿರಬೇಕಾದ ಪೂರ್ಣಕಾಲಾವಧಿ ಎಪ್ಪತ್ತು ವರ್ಷಗಳೆಂದು ತಿಳಿದುಕೊಂಡೆ.</verse>
				<verse number="3">ಉಪವಾಸವಿದ್ದು, ಗೋಣಿತಟ್ಟು ಸುತ್ತಿಕೊಂಡು, ಬೂದಿ ಬಳಿದುಕೊಂಡು, ಸರ್ವೇಶ್ವರನಾದ ದೇವರ ಕಡೆಗೆ ಮುಖವೆತ್ತಿ, ಪ್ರಾರ್ಥನೆ-ವಿಜ್ಞಾಪನೆಗಳಲ್ಲಿ ನಿತರನಾದೆ.</verse>
				<verse number="4">ಪಾಪವನ್ನು ಅರಿಕೆಮಾಡಿ ನನ್ನ ದೇವರಾದ ಸರ್ವೇಶ್ವರನಿಗೆ ಹೀಗೆಂದು ಬಿನ್ನವಿಸಿದೆ: “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ವಾಗ್ದಾನಗಳನ್ನು ಪ್ರೀತಿಯಿಂದ ನೆರವೇರಿಸುತ್ತೀರಿ.</verse>
				<verse number="5">“ನಾವು ಪಾಪಾಪರಾಧಗಳನ್ನು ಮಾಡಿ, ಕೆಟ್ಟವರಾಗಿ ನಡೆದಿದ್ದೇವೆ; ನಿಮಗೆ ವಿರುದ್ಧ ತಿರುಗಿಬಿದ್ದು, ನಿಮ್ಮ ಆಜ್ಞಾವಿಧಿಗಳನ್ನು ತೊರೆದುಬಿಟ್ಟಿದ್ದೇವೆ.</verse>
				<verse number="6">ಅರಸರಿಗೆ, ಒಡೆಯರಿಗೆ, ಹಿರಿಯರಿಗೆ ಹಾಗು ಜನಸಾಮಾನ್ಯರಿಗೆ ನಿಮ್ಮ ದಾಸರಾದ ಪ್ರವಾದಿಗಳು ನಿಮ್ಮ ಹೆಸರಿನಲ್ಲಿ ನುಡಿದ ಮಾತುಗಳಿಗೆ ನಾವು ಕಿವಿಗೊಡಲೇ ಇಲ್ಲ.</verse>
				<verse number="7">ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಾವೋ ಲಜ್ಜೆಗೆಟ್ಟವರು. ಹೌದು, ಯೆಹೂದ್ಯರು ಹಾಗು ಜೆರುಸಲೇಮಿನ ನಿವಾಸಿಗಳು ಈಗಾಗಲೆ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ತಳ್ಳಲ್ಪಟ್ಟಿದ್ದಾರೆ. ದೂರದ ದೇಶಗಳಿಗೂ ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಎಲ್ಲ ಇಸ್ರಯೇಲರು ನಾಚಿಕೆಗೆ ಈಡಾಗಿದ್ದಾರೆ.</verse>
				<verse number="8">ಸ್ವಾಮೀ, ನಿಮಗೆ ವಿರುದ್ಧ ಪಾಪಮಾಡಿದ್ದರಿಂದ ನಾವೂ ನಮ್ಮ ಅರಸರೂ ಒಡೆಯರೂ ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ.</verse>
				<verse number="9">ನಮ್ಮ ದೇವರಾದ ಸರ್ವೇಶ್ವರ, ನಮ್ಮನ್ನು ಕರುಣಿಸುವವರೂ ಕ್ಷಮಿಸುವವರೂ ಆಗಿದ್ದಾರೆ. ಆದರೆ ನಾವು ಅವರಿಗೆ ವಿರುದ್ಧ ತಿರುಗಿಬಿದ್ದೆವು.</verse>
				<verse number="10">ನಮ್ಮ ದೇವರಾದ ಸರ್ವೇಶ್ವರನ ಮಾತನ್ನು ಕೇಳಲಿಲ್ಲ. ಅವರ ದಾಸರಾದ ಪ್ರವಾದಿಗಳ ಮುಖಾಂತರ ನಮಗೆ ಗೊತ್ತುಮಾಡಿದ ಸನ್ಮಾರ್ಗದಲ್ಲಿ ನಾವು ನಡೆಯಲಿಲ್ಲ.</verse>
				<verse number="11">ಇಸ್ರಯೇಲರೆಲ್ಲರು ನಿಮ್ಮ ಧರ್ಮಶಾಸ್ತ್ರವನ್ನು ಮೀರಿ ನಿಮ್ಮ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು. ಆದಕಾರಣ ನಿಮ್ಮ ಶಾಪದ ಕೇಡುಗಳನ್ನೂ ದೇವರ ದಾಸನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ನೀವು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳನ್ನೂ ನಮ್ಮ ಮೇಲೆ ಸುರಿಯಲಾಗಿದೆ. ನಾವು ದ್ರೋಹಿಗಳೇ ಸರಿ.</verse>
				<verse number="12">ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿದ್ದಾರೆ. ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಖಂಡಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾರೆ. ಜೆರುಸಲೇಮಿಗೆ ಆದಂಥ ಕೇಡು ವಿಶ್ವದಲ್ಲಿ ಎಂದೂ ಆಗಲಿಲ್ಲ.</verse>
				<verse number="13">ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ. ಆದರೂ ನಾವು ನಮ್ಮ ಧರ್ಮಮಾರ್ಗಗಳನ್ನು ತೊರೆದುಬಿಟ್ಟಿದ್ದೇವೆ. ನಿಮ್ಮ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಸರ್ವೇಶ್ವರನೆಂಬ ನಿಮ್ಮ ದಯೆಯನ್ನು ಬೇಡಿಕೊಳ್ಳಲಿಲ್ಲ.</verse>
				<verse number="14">ಆದಕಾರಣ ಸರ್ವೇಶ್ವರ ಈ ಕೇಡನ್ನು ಸಕಾಲಕ್ಕೆ ನಮ್ಮ ಮೇಲೆ ಬರಮಾಡಿದ್ದಾರೆ. ನಮ್ಮ ದೇವರಾದ ಸರ್ವೇಶ್ವರ ತಾವು ಮಾಡುವ ಸಕಲ ಕಾರ್ಯಗಳಲ್ಲೂ ನ್ಯಾಯಸ್ವರೂಪರು. ನಾವೋ ಅವರ ಮಾತನ್ನು ಕೇಳಲಿಲ್ಲ.</verse>
				<verse number="15">“ಸರ್ವೇಶ್ವರಾ, ನಮ್ಮ ದೇವರೇ, ನೀವು ನಿಮ್ಮ ಭುಜಪರಾಕ್ರಮವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟಿನಿಂದ ಪಾರುಮಾಡಿ, ಇಂದಿನವರೆಗೂ ಸುಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡವರಾಗಿದ್ದೀರಿ. ಈಗ ಚಿತ್ತೈಸಿ. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.</verse>
				<verse number="16">ಸರ್ವೇಶ್ವರಾ, ನಿಮ್ಮ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿಮ್ಮ ನಗರವೂ ನಿಮ್ಮ ಪವಿತ್ರ ಪರ್ವತವೂ ಆದ ಜೆರುಸಲೇಮ್ ಮೇಲೆ ನಿಮಗಿರುವ ಕೋಪವನ್ನೂ ರೋಷಾಗ್ನಿಯನ್ನೂ ದಯಮಾಡಿ ತೊಲಗಿಸಿಬಿಡಿ. ನಮ್ಮ ಮತ್ತು ನಮ್ಮ ಪೂರ್ವಜರ ಪಾಪಾಪರಾಧಗಳ ನಿಮಿತ್ತ ಜೆರುಸಲೇಮ್ ಮತ್ತು ನಿಮ್ಮ ಜನತೆ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.</verse>
				<verse number="17">ಓ ನಮ್ಮ ದೇವರೇ, ನಿಮ್ಮ ದಾಸನ ಪ್ರಾರ್ಥನೆ ವಿಜ್ಞಾಪನೆಗಳನ್ನು ಈಗ ಆಲಿಸಿರಿ. ಹಾಳಾಗಿರುವ ನಿಮ್ಮ ಪವಿತ್ರಾಲಯವನ್ನು ಸರ್ವೇಶ್ವರ ಎಂಬ ನಿಮ್ಮ ಹೆಸರಿನ ನಿಮಿತ್ತವೇ ಪ್ರಸನ್ನ ಮುಖದಿಂದ ನೋಡಿ.</verse>
				<verse number="18">ನನ್ನ ದೇವರೇ, ಕಿವಿಗೊಟ್ಟು ಕೇಳಿ, ಕಣ್ಣು ತೆರೆದು ನಮ್ಮ ಹಾಳು ಪ್ರದೇಶಗಳನ್ನೂ ನಿಮ್ಮ ಹೆಸರುಗೊಂಡಿರುವ ನಗರವನ್ನೂ ನೋಡಿ. ನಾವು ಸದ್ಧರ್ಮಿಗಳೇನೂ ಅಲ್ಲ. ನಿಮ್ಮ ಮಹಾಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿಮ್ಮ ಮುಂದೆ ಅರಿಕೆಮಾಡುತ್ತಿದ್ದೇವೆ.</verse>
				<verse number="19">ಸ್ವಾಮೀ, ಕೇಳಿ; ಸ್ವಾಮೀ, ಕ್ಷಮಿಸಿ; ಸ್ವಾಮೀ, ಆಲಿಸಿ ಕಾರ್ಯವನ್ನು ಸಾಧಿಸಿ. ತಡಮಾಡಬೇಡಿ. ನನ್ನ ದೇವರೇ, ನಿಮ್ಮ ಜನತೆ ಹಾಗು ನಿಮ್ಮ ನಗರ ನಿಮ್ಮ ಹೆಸರಿನವುಗಳು. ಆದಕಾರಣ, ನಿಮ್ಮ ಹೆಸರನ್ನು ಕಾಪಾಡಿಕೊಳ್ಳಿ.”</verse>
				<verse number="20">ನಾನು ಬಾಯಿಬಿಟ್ಟು ಬೇಡಿಕೊಂಡೆ. ನನ್ನ ಮತ್ತು ನನ್ನ ಜನರಾದ ಇಸ್ರಯೇಲರ ಪಾಪವನ್ನು ಅರಿಕೆಮಾಡುತ್ತಾ ನನ್ನ ದೇವರ ಪವಿತ್ರ ಪರ್ವತದ ವಿಷಯವಾಗಿ ದೇವರಾದ ಸರ್ವೇಶ್ವರನಿಗೆ ಬಿನ್ನವಿಸಿದೆ.</verse>
				<verse number="21">ಹೀಗೆ ಪ್ರಾರ್ಥನೆ ಮಾಡುತ್ತಿರುವಾಗಲೇ, ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲೆಂಬ ವ್ಯಕ್ತಿ ಅಸುರುಸುರಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿ, ನನ್ನೊಂದಿಗೆ ಮಾತಾಡಿ, ಹೀಗೆಂದು ಉಪದೇಶ ಮಾಡಿದನು:</verse>
				<verse number="22">“ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡಲು ಈಗ ಬಂದಿದ್ದೇನೆ;</verse>
				<verse number="23">ನಿನ್ನ ವಿಜ್ಞಾಪನೆಯ ಆರಂಭದಲ್ಲೇ ದೇವರ ಅಪ್ಪಣೆಯಾಯಿತು. ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ. ನೀನು ದೇವರಿಗೆ ಅತಿ ಪ್ರಿಯನು. ಈ ದೈವೋಕ್ತಿಯನ್ನು ಆಲೋಚಿಸು; ಈ ದರ್ಶನವನ್ನು ಗ್ರಹಿಸಿಕೊ:</verse>
				<verse number="24">“ಅಧರ್ಮವನ್ನು ಕೊನೆಗಾಣಿಸುವುದಕ್ಕೆ ಪಾಪಗಳನ್ನು ತೀರಿಸುವುದಕ್ಕೆ, ಅಪರಾಧವನ್ನು ನಿವಾರಿಸುವುದಕ್ಕೆ, ಸನಾತನ ಧರ್ಮವನ್ನು ಸ್ಥಾಪಿಸುವುದಕ್ಕೆ, ದರ್ಶನವನ್ನೂ ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥ ಮಾಡುವುದಕ್ಕೆ, ಅತಿಪರಿಶುದ್ಧವಾದುದನ್ನು ಅಭಿಷೇಕಿಸುವುದಕ್ಕೆ ನಿನ್ನ ಜನಕ್ಕೂ ನಿನ್ನ ಪವಿತ್ರನಗರಕ್ಕೂ ಏಳೆಪ್ಪತ್ತು ವರ್ಷಗಳು ಕಳೆಯಬೇಕೆಂದು ನಿಷ್ಕರ್ಷೆಯಾಗಿದೆ.</verse>
				<verse number="25">ಇದನ್ನು ತಿಳಿದು ಮನದಟ್ಟು ಮಾಡಿಕೊ, ‘ಹಿಂದಿರುಗಿ ಜೆರುಸಲೇಮನ್ನು ಪುನರ್‍ ನಿರ್ಮಿಸಿ’ ಎಂಬ ದೈವೋಕ್ತಿ ಹೊರಡುವಂದಿನಿಂದ ಪ್ರಭುವಾಗಿ ಅಭಿಷಿಕ್ತನಾದವನು ಬರುವುದರೊಳಗೆ ಏಳು ಸಾರಿ ಏಳು ವರ್ಷಗಳು ಕಳೆಯಬೇಕು. ಅದು ಪುನಃ ಬೀದಿ ಚೌಕಗಳಿಂದಲೂ ಕೋಟೆಕೊತ್ತಲುಗಳಿಂದಲೂ ಕಟ್ಟಲ್ಪಟ್ಟು ಏಳು ಸಾರಿ ಅರವತ್ತೆರಡು ವರ್ಷಗಳು ಇರುವುದು. ಆ ಕಾಲವು ಬಹು ಕಷ್ಟಕರವಾದ ಕಾಲವಾಗಿರುವುದು.</verse>
				<verse number="26">ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.</verse>
				<verse number="27">ಆ ರಾಜನು ಏಳು ವರ್ಷ ಗಳ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ಈ ಅವಧಿಯ ಅರ್ಧಭಾಗದಲ್ಲಿ ಬಲಿನೈವೇದ್ಯಗಳನ್ನು ನಿಲ್ಲಿಸಿಬಿಡುವನು. ದೇವಾಲಯದ ರೆಕ್ಕೆಯ ಮೇಲೆ ಅಸಹ್ಯವಾದುದನ್ನು ಸ್ಥಾಪಿಸಲಾಗುವುದು. ಅವನ್ನು ಅಲ್ಲಿ ಇಟ್ಟು ಅಶುದ್ಧಗೊಳಿಸಿದ ಘಾತುಕನು ನಿಶ್ಚಿತ ಪ್ರಳಯದಲ್ಲಿ ಮುಳುಗುವ ತನಕ ಅವು ಅಲ್ಲೇ ಇರುವುವು.”</verse>
			</chapter>
			<chapter number="10">
				<verse number="1">ಪರ್ಷಿಯದ ರಾಜನಾದ ಸೈರೆಷನ ಆಳ್ವಿಕೆಯ ಮೂರನೇ ವರ್ಷದಲ್ಲಿ ಬೇಲ್ತೆಶಚ್ಚೆರನೆಂಬ ದಾನಿಯೇಲನಿಗೆ ಒಂದು ಸಂಗತಿ ಪ್ರಕಟವಾಯಿತು. ಅದು ಮಹಾ ಹೋರಾಟದ ಸಂಗತಿ, ಸತ್ಯವಾದ ಸಂಗತಿ. ಅದರ ಅರ್ಥವನ್ನು ತಾನು ಕಂಡ ದರ್ಶನದಿಂದ ಮನದಟ್ಟು ಮಾಡಿಕೊಂಡನು.</verse>
				<verse number="2">ಆ ದಿನಗಳಲ್ಲಿ ದಾನಿಯೇಲನಾದ ನಾನು ಮೂರು ವಾರ ಒಂದು ವ್ರತವನ್ನು ಕೈಗೊಂಡಿದ್ದೆ.</verse>
				<verse number="3">ಆ ಮೂರು ವಾರ ಮುಗಿಯುವ ತನಕ ನಾನು ಯಾವ ರುಚಿಪದಾರ್ಥವನ್ನೂ ತಿನ್ನಲಿಲ್ಲ. ಮಾಂಸವನ್ನಾಗಲಿ, ದ್ರಾಕ್ಷಾರಸವನ್ನಾಗಲಿ ಬಾಯಲ್ಲಿ ಇಡಲಿಲ್ಲ. ಎಣ್ಣೆಯನ್ನೂ ಹಚ್ಚಿಕೊಳ್ಳಲಿಲ್ಲ.</verse>
				<verse number="4">ಮೊದಲನೆಯ ತಿಂಗಳಿನ ಇಪ್ಪತ್ನಾಲ್ಕನೆಯ ದಿನದಲ್ಲಿ ನಾನು ಟೈಗ್ರಿಸ್ ಎಂಬ ಮಹಾನದಿಯ ದಡದ ಮೇಲೆ ನಿಂತಿದ್ದೆ.</verse>
				<verse number="5">ಕಣ್ಣೆತ್ತಿ ನೋಡಲು, ನಾರುಬಟ್ಟೆಯನ್ನು ಹೊದ್ದುಕೊಂಡಿದ್ದ, ಊಫಜಿನ ಬಂಗಾರದ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡಿದ್ದ, ಒಬ್ಬ ವ್ಯಕ್ತಿ ನನಗೆ ಕಾಣಿಸಿದ.</verse>
				<verse number="6">ಅವನ ಶರೀರ ಸುವರ್ಣರತ್ನದ ಹಾಗೆ ಕಂಗೊಳಿಸಿತು. ಅವನ ಮುಖ ಮಿಂಚಿನಂತೆ ಹೊಳೆಯಿತು. ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ಫಳಫಳಿಸಿದವು. ಅವನ ಕೈಕಾಲುಗಳು ಬೆಳಗಿದ ಕಂಚಿನ ಹಾಗೆ ಥಳಥಳಿಸಿದವು. ಅವನ ಮಾತಿನ ಶಬ್ದ ಜನಸಂದಣಿಯ ಕೋಲಾಹಲದಂತಿತ್ತು.</verse>
				<verse number="7">ಆ ದರ್ಶನವನ್ನು ಕಂಡವನು ದಾನಿಯೇಲನಾದ ನಾನೊಬ್ಬನೇ. ನನ್ನೊಂದಿಗೆ ಇದ್ದವರು ಅದನ್ನು ಕಾಣಲಿಲ್ಲ. ಅವರು ಭಯಭ್ರಾಂತರಾಗಿ ಓಡಿಹೋಗಿ ಅವಿತುಕೊಂಡರು.</verse>
				<verse number="8">ನಾನು ಒಂಟಿಯಾಗಿ ಉಳಿದು ಆ ಅದ್ಭುತವನ್ನು ಕಂಡೆ. ನನ್ನ ಶಕ್ತಿಯೆಲ್ಲಾ ಕರಗಿಹೋಯಿತು. ನನ್ನ ಗಾಂಭೀರ್ಯ ಅಳಿಯಿತು. ನಾನು ನಿತ್ರಾಣನಾದೆ.</verse>
				<verse number="9">ಆದರೂ ಅವನು ಮಾತಾಡುವ ಶಬ್ದ ಕೇಳಿಸಿತು. ಅದು ನನ್ನ ಕಿವಿಗೆ ಬಿದ್ದಾಗ ನಾನು ಮೈಮರೆತು ಅಧೋಮುಖವಾಗಿ ಅಡ್ಡಬಿದ್ದೆ.</verse>
				<verse number="10">ಆಗ ಯಾರದೋ ಕೈ ನನ್ನನ್ನು ಮುಟ್ಟಿದಂತಾಯಿತು. ನಾನು ಗಡಗಡನೆ ನಡುಗುತ್ತಾ ಅಂಗೈಗಳನ್ನೂ ಮೊಣಕಾಲುಗಳನ್ನೂ ಊರಿ ನಿಲ್ಲುವಂತೆ ಮಾಡಿತು.</verse>
				<verse number="11">ಆಗ ಅವನು ನನಗೆ, “ಅತಿಪ್ರಿಯ ದಾನಿಯೇಲನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು. ಎದ್ದು ನಿಂತುಕೋ. ನಾನು ನಿನ್ನ ಬಳಿಗೆ ಕಳುಹಿಸಲ್ಪಟ್ಟವನು,” ಎಂದನು.</verse>
				<verse number="12">ಆಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ! ಏಕೆಂದರೆ ನೀನು ನಿನ್ನ ದೇವರ ಮುಂದೆ ವಿನಮ್ರಪೂರ್ವಕವಾಗಿ (ದೈವಸಂಕಲ್ಪವನ್ನು) ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ ಮೊದಲನೆಯ ದಿನದಲ್ಲೇ ನಿನ್ನ ಪ್ರಾರ್ಥನೆ ದೇವರಿಗೆ ಮುಟ್ಟಿತು. ಆ ಪ್ರಾರ್ಥನೆಯ ನಿಮಿತ್ತವೇ ನಾನು ಬಂದಿದ್ದೇನೆ.</verse>
				<verse number="13">ಪರ್ಷಿಯ ರಾಜ್ಯದ ಕಾವಲುದೂತನು ಇಪ್ಪತ್ತೊಂದು ದಿನ ನನ್ನನ್ನು ಎದುರಿಸಿ ನಿಂತನು. ಆದರೆ ಪ್ರಧಾನ ದೂತರಲ್ಲಿ ಒಬ್ಬನಾದ ಮಿಕಾಯೇಲನು ನನ್ನ ಸಹಾಯಕ್ಕೆ ಬಂದನು. ಅಲ್ಲಿನ ಪರ್ಷಿಯ ರಾಜರ ಸಂಗಡ ಹೋರಾಡಲು ಅವನನ್ನು ಬಿಟ್ಟು ಬಂದಿದ್ದೇನೆ.</verse>
				<verse number="14">ಅಂತ್ಯಕಾಲದಲ್ಲಿ ನಿನ್ನ ಜನರಿಗೆ ಬರಲಿರುವ ಗತಿಯನ್ನು ನಿನಗೆ ತಿಳಿಸುವುದಕ್ಕೋಸ್ಕರ ಬಂದೆ. ಆ ಕಾಲದ ಸಂಗತಿಯನ್ನು ವ್ಯಕ್ತಪಡಿಸುವ ಇನ್ನೊಂದು ದರ್ಶನವಿದೆ,” ಎಂದು ಹೇಳಿದನು.</verse>
				<verse number="15">ಅವನು ಈ ಮಾತನ್ನು ನನಗೆ ಹೇಳಿದ ಕೂಡಲೆ ನಾನು ಮುಖವನ್ನು ತಗ್ಗಿಸಿಕೊಂಡು ನಿಶ್ಶಬ್ದನಾದೆ.</verse>
				<verse number="16">ಆಗ ನರರೂಪ ಹೊಂದಿದ್ದ ಒಬ್ಬನು ನನ್ನ ತುಟಿಗಳನ್ನು ಮುಟ್ಟಿದ. ನಾನು ಬಾಯಿ ತೆರೆದು ನನ್ನ ಮುಂದೆ ನಿಂತಿದ್ದವನಿಗೆ, “ಎನ್ನೊಡೆಯಾ, ಈ ದರ್ಶನದಿಂದ ವೇದನೆಗಳು ನನ್ನನ್ನು ಆಕ್ರಮಿಸಿವೆ, ನಾನು ನಿತ್ರಾಣನಾಗಿದ್ದೇನೆ.</verse>
				<verse number="17">ನನ್ನೊಡೆಯನ ದಾಸನಾದ ನನ್ನಂಥವನು ಎನ್ನೊಡೆಯರಾದ ತಮ್ಮಂಥವರ ಸಂಗಡ ಹೇಗೆ ಮಾತಾಡಬಹುದು? ಈಗ ಶಕ್ತಿಯನ್ನೆಲ್ಲಾ ಕಳೆದುಕೊಂಡಿದ್ದೇನೆ, ನನ್ನಲ್ಲಿ ಉಸಿರೇ ಇಲ್ಲವಾಗಿದೆ,” ಎಂದು ಹೇಳಿದೆ.</verse>
				<verse number="18">ಮನುಷ್ಯರೂಪ ಹೊಂದಿದ್ದ ಆ ವ್ಯಕ್ತಿ ಪುನಃ ನನ್ನನ್ನು ಮುಟ್ಟಿ ಬಲಪಡಿಸಿದ.</verse>
				<verse number="19">ಬಳಿಕ ಆ ವ್ಯಕ್ತಿ ನನಗೆ, “ಅತಿಪ್ರಿಯನೇ, ಭಯಪಡಬೇಡ. ನಿನಗೆ ಶಾಂತಿಸಮಾಧಾನವಿರಲಿ! ಧೈರ್ಯತಂದುಕೊ! ಧೈರ್ಯತಂದುಕೊ!” ಎಂದು ಹೇಳಿದ. ಅವನ ಈ ಮಾತನ್ನು ಕೇಳಿದ ಕೂಡಲೆ ನಾನು ಧೈರ್ಯದಿಂದ, “ಎನ್ನೊಡೆಯಾ, ಮಾತಾಡು. ನನಗೆ ಧೈರ್ಯತುಂಬಿರುವೆ,” ಎಂದು ಅರಿಕೆಮಾಡಿದೆ.</verse>
				<verse number="20">ಅವನು ನನಗೆ ಹೀಗೆಂದು ಹೇಳಿದ: “ನಾನು ನಿನ್ನ ಬಳಿಗೆ ಏಕೆ ಬಂದೆನೆಂಬುದು ನಿನಗೆ ಗೊತ್ತಲ್ಲವೇ? ಈಗ ನಾನು ಪರ್ಷಿಯ ರಾಜ್ಯದ ಕಾವಲುದೂತನೊಂದಿಗೆ ಹೋರಾಡಲು ಹಿಂದಿರುಗಬೇಕು. ನಾನು ಆ ಹೋರಾಟವನ್ನು ತೀರಿಸಿದ ಕೂಡಲೆ ಗ್ರೀಕ್ ರಾಜ್ಯದ ಕಾವಲುದೂತನು ಎದುರುಬೀಳುವನು.</verse>
				<verse number="21">ಸತ್ಯಗ್ರಂಥದಲ್ಲಿ ಲಿಖಿತವಾದುದನ್ನು ಈಗ ನಿನಗೆ ತಿಳಿಸುತ್ತೇನೆ. ಇವರಿಬ್ಬರೊಂದಿಗೆ ಹೋರಾಡುವಲ್ಲಿ ನಿಮ್ಮ ಕಾವಲುದೂತನಾದ ಮಿಕಾಯೇಲನ ಹೊರತು ನನಗೆ ಬೆಂಬಲಿಗರಾಗತಕ್ಕವರು ಇನ್ನಾರೂ ಇಲ್ಲ.</verse>
			</chapter>
			<chapter number="11">
				<verse number="1">“ಮೇದ್ಯನಾದ ದಾರ್ಯಾವೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ನಾನೇ ಮಿಕಾಯೇಲನಿಗೆ ಬೆಂಬಲಕೊಟ್ಟು ಆಶ್ರಯನಾಗಿ ನಿಂತೆ.</verse>
				<verse number="2">“ಈಗ ಸತ್ಯಾಂಶವನ್ನು ತಿಳಿಸುತ್ತೇನೆ, ಕೇಳು: ಪರ್ಷಿಯ ದೇಶದಲ್ಲಿ ಇನ್ನೂ ಮೂವರು ರಾಜರು ಏಳುವರು. ನಾಲ್ಕನೆಯ ರಾಜನು ಎಲ್ಲರಿಗಿಂತಲೂ ಅಧಿಕ ಧನವಂತನಾಗಿರುವನು. ಅವನು ತನ್ನ ಧನದಿಂದ ಪ್ರಬಲನಾಗಿ ಗ್ರೀಕ್ ರಾಜ್ಯಕ್ಕೆ ವಿರುದ್ಧ ತನ್ನ ಬಲವನ್ನೆಲ್ಲ ಪ್ರಯೋಗಿಸುವನು.</verse>
				<verse number="3">“ಅನಂತರ ಪರಾಕ್ರಮಶಾಲಿಯಾದ ಒಬ್ಬ ರಾಜನು ಎದ್ದು ಮಹಾಪ್ರಭುತ್ವದಿಂದ ಆಳುತ್ತಾ ತನ್ನ ಇಷ್ಟಾರ್ಥಗಳನ್ನು ಸಾಧಿಸಿಕೊಳ್ಳುವನು.</verse>
				<verse number="4">ಆದರೆ ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯ ಒಡೆದು ನಾಲ್ಕು ದಿಕ್ಕುಗಳಿಗೂ ಸೀಳಿಹೋಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ಪ್ರಬಲವಾಗಿ ಇದ್ದಂತೆ ಅದು ಇನ್ನು ಪ್ರಬಲವಾಗದು.</verse>
				<verse number="5">“ದಕ್ಷಿಣ ದಿಕ್ಕಿನ ರಾಜನು ಮತ್ತು ಅವನ ದಳವಾಯಿಗಳಲ್ಲಿ ಒಬ್ಬನು ಶಕ್ತಿಶಾಲಿಗಳಾಗುವರು. ದಳವಾಯಿ ರಾಜನಿಗಿಂತ ಶಕ್ತಿಶಾಲಿಯಾಗಿ ಪ್ರಭುತ್ವಕ್ಕೆ ಬರುವನು. ಅವನ ರಾಜ್ಯ ದೊಡ್ಡ ರಾಜ್ಯವಾಗುವುದು.</verse>
				<verse number="6">ಕೆಲವು ವರ್ಷಗಳಾದ ಮೇಲೆ ಅವರು ಒಪ್ಪಂದ ಮಾಡಿಕೊಳ್ಳುವರು. ಇದನ್ನು ದೃಢಪಡಿಸಿಕೊಳ್ಳಲು ಆ ದಕ್ಷಿಣ ರಾಜನ ಕುಮಾರಿ ಉತ್ತರ ದಿಕ್ಕಿನ ರಾಜನನ್ನು ಸೇರುವಳು. ಆದರೂ ತನ್ನ ಸಂಬಂಧವನ್ನು ಉಳಿಸಿಕೊಳ್ಳನು. ಅವನೂ ಅವನ ಸಂತಾನವೂ ನಿಲ್ಲವು. ಅವಳು, ಅವಳನ್ನು ಕರೆತಂದವರು, ಪಡೆದವನು, ಕರೆದುಕೊಂಡವನು ಇವರೆಲ್ಲರೂ ಅಂದು ನಾಶಕ್ಕೀಡಾಗುವರು.</verse>
				<verse number="7">ಅನಂತರ ಅವಳು ಹುಟ್ಟಿದ ಬುಡದಿಂದ ಒಡೆದ ಸಸಿಯೊಂದು ಅದರ ಸ್ಥಾನದಲ್ಲಿ ನಿಲ್ಲುವುದು. ಉತ್ತರರಾಜನ ಸೈನ್ಯಕ್ಕೆ ವಿರುದ್ಧವಾಗಿ ಹೊರಟು, ಅವನ ದುರ್ಗದೊಳಗೆ ನುಗ್ಗಿ, ಅಲ್ಲಿನವರಿಗೆ ಮಾಡುವಷ್ಟೂ ಮಾಡಿ ಗೆಲ್ಲುವನು.</verse>
				<verse number="8">ಅವರ ದೇವರುಗಳನ್ನೂ ಎರಕದ ಬೊಂಬೆಗಳನ್ನೂ ಒಳ್ಳೊಳ್ಳೆ ಬೆಳ್ಳಿಬಂಗಾರದ ಪಾತ್ರೆಗಳನ್ನೂ ಸೂರೆಮಾಡಿಕೊಂಡು ಈಜಿಪ್ಟಿಗೆ ಹಿಂದಿರುಗುವನು. ಕೆಲವು ವರ್ಷಗಳ ತನಕ ಉತ್ತರರಾಜನ ಗೊಡವೆಗೆ ಹೋಗನು.</verse>
				<verse number="9">ಬಳಿಕ ಉತ್ತರರಾಜನು ದಕ್ಷಿಣರಾಜನ ರಾಜ್ಯದ ಮೇಲೆ ದಾಳಿಮಾಡುವನು. ಆದರೆ ಅವನು ಸ್ವದೇಶಕ್ಕೆ ಹಿಂದಿರುಗಬೇಕಾಗುವುದು.</verse>
				<verse number="10">ಆಮೇಲೆ ಉತ್ತರರಾಜನ ಮಕ್ಕಳು ಯುದ್ಧಸನ್ನಾಹ ಮಾಡಿ ಮಹಾವ್ಯೂಹವಾದ ದೊಡ್ಡ ಸೈನ್ಯವನ್ನು ಕೂಡಿಸುವರು. ಆ ಸೈನ್ಯ ಬೆಳೆದು ತುಂಬಿತುಳುಕುವ ಪ್ರವಾಹದಂತೆ ಹಬ್ಬಿಕೊಳ್ಳುವುದು. ಅವರು ಮತ್ತೆ ಯುದ್ಧಕ್ಕೆ ಹೊರಟು ದಕ್ಷಿಣರಾಜನ ದುರ್ಗದವರೆಗೆ ನುಗ್ಗುವರು.</verse>
				<verse number="11">ಆಗ ದಕ್ಷಿಣರಾಜನು ಕ್ರೋಧದಿಂದುರಿಯುತ್ತಾ ಹೊರಟುಬಂದು ಉತ್ತರರಾಜನ ಸಂಗಡ ಯುದ್ಧಮಾಡುವನು. ಉತ್ತರರಾಜನು ಮಹಾವ್ಯೂಹವನ್ನು ಕಟ್ಟಿದರೂ ಅದೆಲ್ಲವು ದಕ್ಷಿಣರಾಜನ ಕೈವಶವಾಗುವುದು.</verse>
				<verse number="12">ಇದರಿಂದಾಗಿ ಅವನು ಗರ್ವಿಷ್ಠನಾಗುವನು. ಲಕ್ಷಾಂತರ ಸೈನಿಕರನ್ನು ಸದೆಬಡಿದಿದ್ದರೂ ಪ್ರಾಬಲ್ಯಕ್ಕೆ ಬಾರನು.</verse>
				<verse number="13">“ತರುವಾಯ ಉತ್ತರರಾಜನು ಹಿಂದಿನ ದಂಡಿಗಿಂತ ದೊಡ್ಡ ದಂಡನ್ನು ಮತ್ತೆ ಕೂಡಿಸಿಕೊಂಡು ಬಹಳ ವರ್ಷಗಳು ಕಳೆದನಂತರ ಮಹಾಸೈನ್ಯ ಸಮೇತ ಅಧಿಕ ಸನ್ನಾಹದಿಂದ ಬರುವನು.</verse>
				<verse number="14">ಆ ಕಾಲದಲ್ಲಿ ಅನೇಕರು ದಕ್ಷಿಣರಾಜನಿಗೆ ಎದುರು ನಿಲ್ಲುವರು. ಇದಲ್ಲದೆ, ನಿನ್ನ ಸ್ವಂತಜನರಲ್ಲಿ ಹಿಂಸಾಪ್ರಿಯರು ಆ ದರ್ಶನವನ್ನು ನಿಜವಾಗಿಸಬೇಕೆಂದು ದಂಗೆ ಏಳುವರು. ಆದರೆ ಸೋತುಹೋಗುವರು.</verse>
				<verse number="15">ಉತ್ತರರಾಜನು ಬಂದು, ಮುತ್ತಿಗೆಹಾಕಿ, ಕೋಟೆಕೊತ್ತಲದ ನಗರವನ್ನು ಹಿಡಿಯುವನು. ದಕ್ಷಿಣದ ಭುಜಬಲವು ಅವನನ್ನು ನಿಲ್ಲಿಸಲಾರದು. ಅಲ್ಲಿನ ಮಹಾವೀರರು ತಡೆಯಲಾರರು. ಎದುರಿಸುವ ಯಾವ ಶಕ್ತಿಯೂ ಇರದು.</verse>
				<verse number="16">ದಕ್ಷಿಣದರಾಜನಿಗೆ ವಿರುದ್ಧ ಬರುವವನು ಇಚ್ಛಾನುಸಾರ ವರ್ತಿಸುವನು. ಅವನನ್ನು ಎದುರಿಸಬಲ್ಲವನು ಒಬ್ಬನೂ ಇರನು. ಆ ‘ಚೆಲುವಿನ ನಾಡನ್ನೂ’ ಗೆದ್ದು ಅದನ್ನು ಪೂರ್ತಿಯಾಗಿ ತನ್ನ ಕೈಹಿಡಿತದಲ್ಲಿ ಇಟ್ಟುಕೊಳ್ಳುವನು.</verse>
				<verse number="17">“ಉತ್ತರದ ರಾಜನು ದಕ್ಷಿಣರಾಜನ ಮೇಲೆ ಬೀಳಬೇಕೆಂದು ನಿರ್ಧರಿಸಿ ತನ್ನ ರಾಜ್ಯದ ಸಮಸ್ತ ಶಕ್ತಿಸಮೇತನಾಗಿ ಹೊರಟು ಅವನ ಸಂಗಡ ಒಪ್ಪಂದ ಮಾಡಿಕೊಳ್ಳುವನು. ಅವನ ರಾಜ್ಯದ ಹಾನಿಗಾಗಿಯೆ ಹೆಣ್ಣನ್ನು ಕೊಡುವನು. ಆದರೆ ಈ ಉಪಾಯ ಫಲಿಸದು. ಅದರಿಂದ ತನಗೂ ಅನುಕೂಲವಾಗದು.</verse>
				<verse number="18">ಆಮೇಲೆ ಅವನು ಕರಾವಳಿಯ ನಾಡುಗಳ ಕಡೆಗೆ ಕಣ್ಣಿಟ್ಟು ಅಲ್ಲಿಯ ಅನೇಕ ನಾಡುಗಳನ್ನು ಆಕ್ರಮಿಸುವನು. ಆದರೆ ದಳವಾಯಿ ಒಬ್ಬನು ಅವನ ಅಟ್ಟಹಾಸವನ್ನು ತಡೆಗಟ್ಟುವನು. ಅವನು ಮಾಡುವ ಹಾನಿ ಅವನಿಗೇ ತಗಲುವಂತೆ ಮಾಡುವನು.</verse>
				<verse number="19">ಬಳಿಕ ರಾಜನು ಸ್ವದೇಶದ ದುರ್ಗಗಳ ಕಡೆಗೆ ಹಿಂದಿರುಗುವನು. ಆದರೆ ಎಡವಿಬಿದ್ದು ಅಳಿದುಹೋಗುವನು.</verse>
				<verse number="20">“ಅವನ ಸ್ಥಾನದಲ್ಲಿ ಮತ್ತೊಬ್ಬನು ರಾಜ್ಯವಾಳುವನು. ಇವನು ರಾಜ್ಯದಲ್ಲಿನ ಶಿರೋಮಣಿಯಂಥ ನಾಡನ್ನೆಲ್ಲ ದೋಚಿಕೊಳ್ಳಬಲ್ಲ ಉದ್ಯೋಗಿಯನ್ನು ನೇಮಿಸುವನು. ಆದರೆ ಕೆಲವೇ ದಿನಗಳಲ್ಲಿ ಅವನು ಕದನದಿಂದ ಅಲ್ಲ, ಕೋಪದಿಂದ ಅಲ್ಲ, ಹಾಗೆಯೇ ಮಡಿದುಹೋಗುವನು.</verse>
				<verse number="21">“ಅವನ ಸ್ಥಾನದಲ್ಲಿ ನೀಚನೊಬ್ಬನು ಏಳುವನು. ಅವನು ರಾಜಪದವಿಗೆ ಹಕ್ಕುದಾರನಲ್ಲ. ಆದರೂ ನೆಮ್ಮದಿಯ ಕಾಲದಲ್ಲಿ ನಯವಾದ ನುಡಿಗಳಿಂದ ರಾಜ್ಯವನ್ನು ಪಡೆದುಕೊಳ್ಳುವನು.</verse>
				<verse number="22">ಅವನನ್ನು ಎದುರಿಸುವ ದೊಡ್ಡ ದೊಡ್ಡ ಸೈನ್ಯಗಳು ಹಾಗು ದೇವರ ಪ್ರಧಾನ ಯಾಜಕನು ಅವನ ಸೈನ್ಯ ಪ್ರವಾಹಕ್ಕೆ ಸಿಕ್ಕಿ ಅದರಲ್ಲಿ ಮುಳುಗಿ ನಾಶವಾಗುವರು.</verse>
				<verse number="23">ಅವನ ಸಂಗಡ ಒಪ್ಪಂದ ಮಾಡಿಕೊಂಡವನಿಗೆ ಕೂಡಲೆ ಮೋಸಮಾಡುವನು. ಕೊಂಚ ಜನರ ಸಹಾಯದಿಂದಲೆ ಏಳಿಗೆಯಾಗಿ ಬಲಗೊಳ್ಳುವನು.</verse>
				<verse number="24">ನೆಮ್ಮದಿಯ ಕಾಲದಲ್ಲಿ ಸಂಸ್ಥಾನದ ಫಲವತ್ತಾದ ಪ್ರದೇಶಗಳ ಮೇಲೆ ದಾಳಿಮಾಡುವನು. ತಂದೆತಾತಂದಿರು ಮಾಡದಂಥ ಕಾರ್ಯಗಳನ್ನು ಮಾಡುವನು. ಸೂರೆ-ಸುಲಿಗೆ-ಕೊಳ್ಳೆಹೊಡೆದವುಗಳನ್ನು ತನ್ನವರಿಗೆ ಚೆಲ್ಲಿಬಿಡುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕೊನೆಯವರೆಗೂ ಮುಂದುವರೆಸುವನು.</verse>
				<verse number="25">“ಅವನು ಧೈರ್ಯತಂದುಕೊಂಡು, ದೊಡ್ಡ ದಂಡೆತ್ತಿ, ದಕ್ಷಿಣರಾಜನಿಗೆ ವಿರುದ್ಧ ತನ್ನ ರಾಜ್ಯದ ಶಕ್ತಿಯನ್ನೆಲ್ಲ ಕೂಡಿಸುವನು. ದಕ್ಷಿಣರಾಜನಾದರೋ ಅತ್ಯಧಿಕ ಬಲವುಳ್ಳ ಮಹಾಸೈನ್ಯ ಸಮೇತನಾಗಿ ಯುದ್ಧಕ್ಕೆ ಹೊರಡುವನು. ಆದರೆ ಜಯಗಳಿಸನು. ಕುಯುಕ್ತಿಗಳಿಗೆ ಗುರಿಯಾಗಿ ಸೋಲನ್ನು ಅಪ್ಪಬೇಕಾಗುವುದು.</verse>
				<verse number="26">ಅವನ ಮೃಷ್ಟಾನ್ನ ತಿಂದವರೇ ಅವನಿಗೆ ಎರಡು ಬಗೆಯುವರು. ಅವನ ಸೈನ್ಯವು ಕೊಚ್ಚಿಕೊಂಡುಹೋಗುವುದು. ಬಹುಜನರು ಹತರಾಗಿ ಬೀಳುವರು.</verse>
				<verse number="27">ಆ ಇಬ್ಬರು ರಾಜರು ಪರಸ್ಪರ ಕೇಡಿನ ಮನಸ್ಸು ಉಳ್ಳವರಾಗಿ ಸಹಪಂಕ್ತಿಯಲ್ಲಿ ಕುಳಿತಿದ್ದರೂ ಸುಳ್ಳುಪೊಳ್ಳು ಮಾತಾಡಿಕೊಳ್ಳುವರು. ಆದರೆ ನಿಶ್ಚಿತಕಾಲ ಬರುವ ತನಕ ಅವರಿಂದ ಏನೂ ಸಾಧಿಸಲಾಗದು.</verse>
				<verse number="28">ಅನಂತರ ಉತ್ತರದ ಆ ನೀಚರಾಜನು ಬಹು ಆಸ್ತಿಯನ್ನು ಕೊಳ್ಳೆಹೊಡೆದು ಸ್ವದೇಶಕ್ಕೆ ಹಿಂತಿರುಗುವನು. ಅವನ ಮನಸ್ಸು ಪವಿತ್ರ ಒಡಂಬಡಿಕೆಗೆ ವಿರುದ್ಧವಾಗಿರುವುದು. ಇಷ್ಟಬಂದ ಹಾಗೆ ವರ್ತಿಸಿ ಮತ್ತೆ ಸ್ವದೇಶವನ್ನು ಸೇರುವನು.</verse>
				<verse number="29">“ನಿಶ್ಚಿತ ಕಾಲದಲ್ಲಿ ಪುನಃ ದಕ್ಷಿಣದೇಶದ ಮೇಲೆ ದಾಳಿಮಾಡುವನು. ಆದರೆ ಮೊದಲು ಆದಂತೆಯೇ ಎರಡನೇಯ ಸಲ ಆಗದು.</verse>
				<verse number="30">ಅವನಿಗೆ ವಿರುದ್ಧವಾಗಿ ರೋಮಿನ ಹಡಗುಗಳು ಬರಲು ಅವನು ಎದೆಗುಂದಿ ಹಿಂದಿರುಗುವನು. ಪವಿತ್ರ ಒಡಂಬಡಿಕೆಯ ವಿರುದ್ಧ ಮತ್ಸರಗೊಂಡು ಸಾಧ್ಯವಾದಷ್ಟೂ ಹಾನಿಮಾಡುವನು. ಸ್ವದೇಶಕ್ಕೆ ಹಿಂದಿರುಗಿ ಪವಿತ್ರ ಒಡಂಬಡಿಕೆಯನ್ನು ತೊರೆದವರಿಗೆ ಆದರ ತೋರುವನು.</verse>
				<verse number="31">ಅವನು ಕೂಡಿಸುವ ಸೈನ್ಯವು ಆಶ್ರಯದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸುವುದು. ಅನುದಿನದ ಬಲಿಯನ್ನು ನಿಲ್ಲಿಸುವುದು. ವಿನಾಶಕರ ವಿಕಟ ಮೂರ್ತಿಯನ್ನು ಪ್ರತಿಷ್ಠಾಪಿಸುವುದು.</verse>
				<verse number="32">ಒಡಂಬಡಿಕೆಯ ದ್ರೋಹಿಗಳು ಅವನ ನಯನುಡಿಗೆ ಮಾರುಹೋಗುವರು. ತಮ್ಮ ದೇವರನ್ನು ಅರಿತವರೋ ದೃಢಚಿತ್ತರಾಗಿ ಕೃತಾರ್ಥರಾಗುವರು.</verse>
				<verse number="33">ಜನರಲ್ಲಿನ ಬುದ್ಧಿವಂತ ನಾಯಕರು ಅನೇಕರಿಗೆ ಬುದ್ಧಿಹೇಳುವರು. ಕೆಲಕಾಲ ಅವರು ಕತ್ತಿ-ಬೆಂಕಿ-ಸೆರೆ-ಸೂರೆಗಳಿಗೆ ತುತ್ತಾಗುವರು.</verse>
				<verse number="34">ಹೀಗಾಗುವಾಗ ಅವರಿಗೆ ಅಲ್ಪಸ್ವಲ್ಪ ಸಹಾಯ ದೊರೆಯುವುದು. ಆ ಬಳಿಕ ಬಹುಮಂದಿ ನಯನವಿರಾದ ಮಾತುಗಳನ್ನಾಡುತ್ತಾ ಅವರನ್ನು ಸೇರಿಕೊಳ್ಳುವರು.</verse>
				<verse number="35">ಅಂತ್ಯಕಾಲದವರೆಗೆ ಬುದ್ಧಿವಂತ ನಾಯಕರಲ್ಲಿ ಕೆಲವರು ಸಾವಿಗೆ ತುತ್ತಾಗುವರು. ಇದರಿಂದ ಜನರು ಶೋಧಿಸಲ್ಪಟ್ಟು, ಶುದ್ಧಿಹೊಂದಿ ಶುಭ್ರರಾಗುವರು. ಅಂತ್ಯವು ಕ್ಲುಪ್ತಕಾಲದಲ್ಲೇ ಬರುವುದು.</verse>
				<verse number="36">“(ಉತ್ತರದ) ರಾಜನು ಮನಸ್ಸು ಬಂದ ಹಾಗೆ ನಡೆದು ತಾನು ಎಲ್ಲ ದೇವರುಗಳಿಗಿಂತಲೂ ದೊಡ್ಡವನೆಂದು ತನ್ನನ್ನೇ ಹೆಚ್ಚಿಸಿಕೊಂಡು ಗರ್ವಿಷ್ಠನಾಗುವನು. ದೇವಾಧಿದೇವರನ್ನು ಅತಿಯಾಗಿ ದೂಷಿಸುವನು. ನಿಮ್ಮ ಮೇಲಿನ ದೈವಕೋಪ ತೀರುವ ತನಕ ಅವನು ವೃದ್ಧಿಯಾಗುವನು. ದೈವಸಂಕಲ್ಪ ನೆರವೇರಲೇಬೇಕು.</verse>
				<verse number="37">ಅವನು ತನ್ನ ಪೂರ್ವಜರ ದೇವರನ್ನಾಗಲಿ, ಮಹಿಳೆಯರು ಮೋಹಿಸುವ ದೇವರನ್ನಾಗಲಿ, ಯಾವ ದೇವರನ್ನೇ ಆಗಲಿ, ಲಕ್ಷಿಸನು. ಎಲ್ಲ ದೇವರುಗಳಿಗಿಂತ ತನ್ನನ್ನೇ ಹೆಚ್ಚಿಸಿಕೊಳ್ಳುವನು.</verse>
				<verse number="38">ಕುಲದೇವರಿಗೆ ಬದಲಾಗಿ ದುರ್ಗ ದೇವರನ್ನು ಘನಪಡಿಸುವನು. ಪೂರ್ವಜರಿಗೆ ತಿಳಿಯದ ದೇವರನ್ನು ಬೆಳ್ಳಿಬಂಗಾರದಿಂದಲೂ ರತ್ನಗಳಿಂದಲೂ ಅಮೂಲ್ಯ ಕೊಡುಗೆಗಳಿಂದಲೂ ಗೌರವಿಸುವನು.</verse>
				<verse number="39">ಅನ್ಯದೇವರ ಸಹಾಯದಿಂದ ಬಲವಾದ ಕೋಟೆಗಳನ್ನು ಆಕ್ರಮಿಸುವನು. ತನಗೆ ಮೆಚ್ಚುಗೆಯಾದವರನ್ನು ಹೆಚ್ಚಾಗಿ ಸತ್ಕರಿಸುವನು. ಅವರನ್ನು ಬಹುಜನರ ಮೇಲೆ ಅಧಿಕಾರಿಗಳನ್ನಾಗಿ ನೇಮಿಸುವನು. ಹಣಕ್ಕಾಗಿ ದೇಶವನ್ನೇ ಹಂಚಿಬಿಡುವನು.</verse>
				<verse number="40">“ಅಂತ್ಯಕಾಲದಲ್ಲಿ ದಕ್ಷಿಣರಾಜನು ಉತ್ತರರಾಜನ ಮೇಲೆ ಬೀಳುವನು. ಆದರೆ ಉತ್ತರರಾಜನು ರಥಾಶ್ವಬಲಗಳಿಂದಲೂ ಬಹು ನಾವೆಗಳಿಂದಲೂ ಕೂಡಿದವನಾಗಿ ದಕ್ಷಿಣರಾಜನ ಮೇಲೆ ಧಾಳಿಮಾಡಿ ನಾಡುನಾಡುಗಳನ್ನು ನುಗ್ಗಿ, ಪ್ರವಾಹದಂತೆ ಹರಡಿಕೊಳ್ಳುವನು.</verse>
				<verse number="41">ಆ ‘ಚೆಲುವಿನ ನಾಡಿಗೂ’ ನುಗ್ಗುವನು. ಅನೇಕ ಸೀಮೆಗಳು ಅವನಿಂದ ನಾಶವಾಗುವುವು. ಆದರೆ ಎದೋಮ್ಯರು, ಮೋವಾಬ್ಯರು, ಅಮ್ಮೋನಿನ ಹೆಚ್ಚಿನ ಭಾಗದವರು ಅವನ ಕೈಯಿಂದ ತಪ್ಪಿಸಿಕೊಳ್ಳುವರು.</verse>
				<verse number="42">ಬೇರೆ ದೇಶಗಳ ಮೇಲೂ ಕೈಮಾಡುವನು; ಈಜಿಪ್ಟ್ ದೇಶವು ಅವನ ಕೈಯಿಂದ ತಪ್ಪಿಸಿಕೊಳ್ಳದು.</verse>
				<verse number="43">ಬೆಳ್ಳಿಬಂಗಾರಗಳ ನಿಧಿನಿಕ್ಷೇಪಗಳನ್ನು ಹಾಗು ಈಜಿಪ್ಟಿನ ಒಳ್ಳೊಳ್ಳೆಯ ವಸ್ತುಗಳೆಲ್ಲವನ್ನು ವಶಮಾಡಿಕೊಳ್ಳುವನು. ಲಿಬ್ಯ ಮತ್ತು ಸುಡಾನಿನವರು ಅವನನ್ನು ಹಿಂಬಾಲಿಸುವರು.</verse>
				<verse number="44">ಹೀಗಿರಲು ಪೂರ್ವದಿಂದ ಮತ್ತು ಉತ್ತರದಿಂದ ಬರುವ ಸುದ್ದಿ ಅವನನ್ನು ಬಾಧಿಸುವುದು. ಅವನು ಅತಿರೋಷಗೊಂಡು ಬಹುಜನರನ್ನು ಧ್ವಂಸಿಸಿ ನಿರ್ನಾಮಮಾಡಲು ಹೊರಡುವನು.</verse>
				<verse number="45">ಕಡಲಿಗೂ ಚೆಲುವಿನ ಪರಿಶುದ್ಧ ಪರ್ವತಕ್ಕೂ ನಡುವೆ ಅರಮನೆಯಂಥ ಗುಡಾರವನ್ನು ಹಾಕಿಸುವನು. ಆದರೂ ಸಹಾಯಕ್ಕೆ ಯಾರೂ ಇಲ್ಲದವನಾಗಿ ಸಾಯುವನು.</verse>
			</chapter>
			<chapter number="12">
				<verse number="1">“ಆ ಕಾಲದಲ್ಲಿ ನಿನ್ನ ಜನರ ಪಕ್ಷ ವಹಿಸುವ ಮಹಾದೂತನಾದ ಮಿಕಾಯೇಲನು ಕಾಣಿಸಿಕೊಳ್ಳುವನು. ಮೊತ್ತಮೊದಲು, ಮಾನವ ಜನಾಂಗ ಉಂಟಾದಂದಿನಿಂದ ಅಂದಿನವರೆಗೆ ಸಂಭವಿಸದ ಘೋರ ಸಂಕಟ ಉಂಟಾಗುವುದು. ಆಗ ನಿನ್ನ ಜನರಲ್ಲಿ ಯಾರ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಇರುವುದೋ ಅವರೆಲ್ಲರು ಜೀವೋದ್ಧಾರವನ್ನು ಪಡೆಯುವರು.</verse>
				<verse number="2">ಸತ್ತು ಧೂಳಿ ಮಣ್ಣಿನಲ್ಲಿ ‘ದೀರ್ಘನಿದ್ರೆ’ಮಾಡುತ್ತಿರುವ ಅನೇಕರು ಏಳುವರು. ಎಚ್ಚೆತ್ತವರಲ್ಲಿ ಕೆಲವರು ನಿತ್ಯಜೀವವನ್ನು ಅನುಭವಿಸುವರು; ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.</verse>
				<verse number="3">ಬುದ್ಧಿವಂತರು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಕ್ಕೂ ನಕ್ಷತ್ರಗಳಂತೆ ಹೊಳೆಯುವರು.</verse>
				<verse number="4">“ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು; ಇವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು; ಅಂತ್ಯಕಾಲದವರೆಗೆ ಮರೆಯಾಗಿರಲಿ. ಬಹುಜನರು ಅತ್ತಿತ್ತ ಅಲೆದಾಡುವರು (ಸತ್ಯಕ್ಕಾಗಿ). ಅಧರ್ಮ ಹೆಚ್ಚುತ್ತಿರುವುದು.”</verse>
				<verse number="5">ಕೂಡಲೆ ದಾನಿಯೇಲನಾದ ನಾನು ಮತ್ತೆ ಇಬ್ಬರು ವ್ಯಕ್ತಿಗಳನ್ನು ಕಂಡೆ. ಅವರಲ್ಲಿ ಒಬ್ಬನು ನದಿಯ ಈ ದಡದಲ್ಲಿ, ಇನ್ನೊಬ್ಬನು ಆ ದಡದಲ್ಲಿ ನಿಂತಿದ್ದರು.</verse>
				<verse number="6">ಇವರಲ್ಲಿ ಒಬ್ಬನು, ನದಿಯ ನೀರಿನ ಮೇಲ್ಗಡೆ ನಾರಿನ ಹೊದಿಕೆಯನ್ನು ಹೊದ್ದು ನಿಂತಿದ್ದ ದೂತನನ್ನು ನೋಡಿ, “ಈ ಆಶ್ಚರ್ಯಕಾರ್ಯಗಳು ನೆರವೇರಲು ಎಷ್ಟುಕಾಲ ಹಿಡಿಯುವುದು?” ಎಂದು ಕೇಳಿದನು.</verse>
				<verse number="7">ಆ ದೂತ ಎಡಬಲಗೈಗಳನ್ನು ಆಕಾಶದ ಕಡೆಗೆ ಎತ್ತಿಕೊಂಡು, “ಶಾಶ್ವತ ಜೀವಸ್ವರೂಪನಾಣೆ, ಒಂದು ಯುಗ, ಎರಡು ಯುಗ, ಮತ್ತು ಅರ್ಧ ಯುಗ ಕಳೆಯಬೇಕು. ದೇವಜನರಿಗಾಗುವ ಹಿಂಸೆಬಾಧೆಗಳು ಸಂಪೂರ್ಣವಾಗಿ ನಿಂತಮೇಲೆ ಈ ಕಾರ್ಯಗಳೆಲ್ಲ ಮುಕ್ತಾಯವಾಗುವುವು,” ಎಂಬುದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.</verse>
				<verse number="8">ನನಗೆ ಅದು ಕೇಳಿಸಿತ್ತಾದರೂ ಅರ್ಥವಾಗಲಿಲ್ಲ. ಆಗ ನಾನು, “ಎನ್ನೊಡೆಯಾ, ಈ ಕಾರ್ಯಗಳ ಪರಿಣಾಮವೇನು?” ಎಂದು ಪ್ರಶ್ನೆಮಾಡಿದೆ.</verse>
				<verse number="9">ಅವನು, “ದಾನಿಯೇಲನೇ ಹೋಗು; ಈ ಮಾತುಗಳು ಅಂತ್ಯಕಾಲದವರೆಗೂ ಮುಚ್ಚಲ್ಪಟ್ಟು ಮುದ್ರಿತವಾಗಿವೆ.</verse>
				<verse number="10">ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ದುಷ್ಟರು ದುಷ್ಟರಾಗಿಯೇ ನಡೆಯುವರು. ಅವರಲ್ಲಿ ಯಾರಿಗೂ ವಿವೇಕವಿರದು. ಬುದ್ಧಿವಂತರಿಗೆ ವಿವೇಕವಿರುವುದು.</verse>
				<verse number="11">ಅನುದಿನದ ಬಲಿ ನಿಂತುಹೋಗುವುದು. ‘ವಿನಾಶಕರ ವಿಕಟ ಮೂರ್ತಿ’ ಪ್ರತಿಷ್ಠಿತವಾದ ಮೇಲೆ 1290 ದಿನಗಳು ಕಳೆಯಬೇಕು.</verse>
				<verse number="12">1335 ದಿನಗಳ ಮಟ್ಟಿಗೆ ವಿಶ್ವಾಸದಿಂದ ಕಾದಿರುವವರು ಧನ್ಯರು!</verse>
				<verse number="13">ನೀನು ಹೋಗಿ ಅಂತ್ಯದವರೆಗೆ ವಿಶ್ವಾಸದಿಂದಿರು. ನೀನು ‘ದೀರ್ಘನಿದ್ರೆ’ಯನ್ನು ಹೊಂದಿ, ನಿನಗೆ ನಿರ್ಧರಿಸಲಾದ ಸ್ಥಾನವನ್ನು ಪಡೆಯಲು ಯುಗಸಮಾಪ್ತಿಯಲ್ಲಿ ಎದ್ದುಬರುವೆ,” ಎಂದು ಹೇಳಿದನು.</verse>
			</chapter>
		</book>
		<book number="28">
			<chapter number="1">
				<verse number="1">ಜುದೇಯ ನಾಡಿನಲ್ಲಿ ಉಜ್ಜೀಯ, ಯೋತಾಮ, ಆಹಾಜ ಮತ್ತು ಹಿಜ್ಕೀಯ ಇವರು ಅರಸರಾಗಿದ್ದಾಗ ಹಾಗೂ ಇಸ್ರಯೇಲ್ ನಾಡಿನಲ್ಲಿ ಯೋವಾಷನ ಮಗ ಯಾರೊಬ್ಬಾಮನು ಆಳುತ್ತಿದ್ದ ಕಾಲದಲ್ಲಿ, ಬೆಯೇರಿಯನ ಮಗನಾದ ಹೊಶೇಯನಿಗೆ ದೇವರು ದಯಪಾಲಿಸಿದ ಸಂದೇಶವಿದು:</verse>
				<verse number="2">ಸರ್ವೇಶ್ವರಸ್ವಾಮಿ ಪ್ರಥಮವಾಗಿ ಹೊಶೇಯನ ಸಂಗಡ ಮಾತನಾಡುತ್ತಾ ಆತನಿಗೆ ಹೇಳಿದ್ದೇನೆಂದರೆ: “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೊ. ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೊ. ಏಕೆಂದರೆ, ನನ್ನ ಪ್ರಜೆ ನನ್ನನ್ನು ತೊರೆದುಬಿಟ್ಟು ವ್ಯಭಿಚಾರದಲ್ಲಿ ಮುಳುಗಿದೆ ಎಂಬುದಕ್ಕೆ ಇದು ನಿದರ್ಶನವಾಗಿರಲಿ.”</verse>
				<verse number="3">ಅಂತೆಯೇ ಹೊಶೇಯನು ದಿಬ್ಲಯಿಮನ ಮಗಳಾದ ಗೋಮೆರಳನ್ನು ಮದುವೆಯಾದನು. ಅವಳು ಗರ್ಭಿಣಿಯಾಗಿ ಅವನಿಗೆ ಒಂದು ಗಂಡುಮಗುವನ್ನು ಹೆತ್ತಳು.</verse>
				<verse number="4">ಆಗ ಸರ್ವೇಶ್ವರ, ಹೊಶೇಯನಿಗೆ, “ಈ ಮಗುವಿಗೆ ಜೆಸ್ರೀಲ್ ಎಂದು ಹೆಸರಿಡು. ಏಕೆಂದರೆ, ಇಸ್ರಯೇಲ್‍ನಲ್ಲಿ ಹರಿಸಿದ ರಕ್ತಪಾತಕ್ಕೆ ಪ್ರತಿಯಾಗಿ ಸ್ವಲ್ಪಕಾಲದಲ್ಲೆ ಯೇಹುವಿನ ಮನೆತನವನ್ನು ದಂಡಿಸುವೆನು; ಇಸ್ರಯೇಲ್ ರಾಜ್ಯವನ್ನು ಅಂತ್ಯಗೊಳಿಸುವೆನು.</verse>
				<verse number="5">ಅಷ್ಟೇ ಅಲ್ಲ, ಅಂದೇ ಜೆಸ್ರೀಲಿನ ಕಣಿವೆಯಲ್ಲಿ ಇಸ್ರಯೇಲಿನ ಬಿಲ್ಲುಶಕ್ತಿಯನ್ನು ಮುರಿದುಬಿಡುವೆನು,” ಎಂದರು.</verse>
				<verse number="6">ಗೋಮೆರಳು ಪುನಃ ಗರ್ಭಿಣಿಯಾಗಿ ಒಂದು ಹೆಣ್ಣುಮಗುವನ್ನು ಹೆತ್ತಳು. ಆಗ ಸರ್ವೇಶ್ವರ, ಹೊಶೇಯನಿಗೆ: “ಇವಳನ್ನು ‘ಲೋರುಹಾಮ’ ಎಂದು ಕರೆ. ಏಕೆಂದರೆ, ನಾನು ಇನ್ನು ಇಸ್ರಯೇಲರನ್ನು ಪ್ರೀತಿಸೆನು; ಇನ್ನು ಅವರನ್ನು ಕ್ಷಮಿಸೆನು.</verse>
				<verse number="7">ಆದರೆ ಯೆಹೂದ್ಯ ಮನೆತನವನ್ನು ಪ್ರೀತಿಸಿ ಉದ್ಧರಿಸುವೆನು. ಬಿಲ್ಲುಬಾಣ, ಕತ್ತಿಕಾಳಗ, ಕುದುರೆರಾಹುತರು ಇವುಗಳಿಂದಲ್ಲ, ದೇವರಾದ ಸರ್ವೇಶ್ವರನ ಶಕ್ತಿಯಿಂದಲೇ ಅವರನ್ನು ರಕ್ಷಿಸುವೆನು,” ಎಂದರು.</verse>
				<verse number="8">ಮಗುವು ಮೊಲೆಬಿಟ್ಟನಂತರ ಗೋಮೆರಳು ಪುನಃ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತಳು.</verse>
				<verse number="9">ಆಗ ಸರ್ವೇಶ್ವರ: “ಈ ಮಗುವಿಗೆ ‘ಲೋ-ಅಮ್ಮಿ’ ಎಂದು ನಾಮಕರಣ ಮಾಡು. ಏಕೆಂದರೆ, ಇನ್ನು ನೀವು ನನ್ನ ಪ್ರಜೆಯಲ್ಲ; ನಾನು ನಿಮ್ಮ ದೇವರಲ್ಲ,” ಎಂದರು.</verse>
				<verse number="10">ಆದರೂ ಇಸ್ರಯೇಲ್ ಜನಾಂಗ ಅಳೆಯುವುದಕ್ಕೂ ಎಣಿಸುವುದಕ್ಕೂ ಅಸಾಧ್ಯವಾದ ಕಡಲತೀರದ ಮರಳಿನಂತಾಗುವುದು. ದೇವರು ಅವರಿಗೆ ಇಂದು, “ನೀವು ನನ್ನ ಪ್ರಜೆಯಲ್ಲ” ಎಂದಿದ್ದಾರೆ; ಆದರೂ, “ನೀವು ಜೀವಸ್ವರೂಪಿಯಾದ ದೇವರ ಮಕ್ಕಳು” ಎನಿಸಿಕೊಳ್ಳುವ ದಿನ ಬರುವುದು.</verse>
				<verse number="11">ಯೆಹೂದ್ಯಜನರೂ ಇಸ್ರಯೇಲಿನ ಜನರೂ ಪುನಃ ಒಂದುಗೂಡುವರು. ಒಬ್ಬನೇ ಅಧಿಪತಿಯನ್ನು ಆರಿಸಿಕೊಳ್ಳುವರು. ಅವರೆಲ್ಲರೂ ನಾನಾ ದೇಶಗಳಿಂದ ಹೊರಟುಬರುವರು. ಜೆಸ್ರೀಲಿನ ಆ ದಿನವು ಮಹತ್ತಾದುದು.</verse>
			</chapter>
			<chapter number="2">
				<verse number="1">ನಿಮ್ಮ ಸಹೋದರರನ್ನು ‘ನಮ್ಮವರೇ' ಎಂದೂ ನಿಮ್ಮ ಸಹೋದರಿಯರನ್ನು’ಪ್ರೀತಿಪಾತ್ರರೇ’ ಎಂದೂ ಸಂಬೋಧಿಸಿರಿ.</verse>
				<verse number="2">ಮಕ್ಕಳೇ, ವಾದಿಸಿರಿ; ನಿಮ್ಮ ತಾಯಿಯೊಡನೆ ವಾದಿಸಿರಿ. ಅವಳು ನನ್ನ ಪತ್ನಿಯಲ್ಲ, ನಾನು ಅವಳ ಪತಿಯಲ್ಲ. ತನ್ನ ಮುಖದಿಂದ ವೇಶ್ಯಾಚಾರದ ಸೋಗನ್ನೂ ಸ್ತನಮಧ್ಯದಿಂದ ವ್ಯಭಿಚಾರದ ಬೆಡಗನ್ನೂ ತ್ಯಜಿಸಲಿ.</verse>
				<verse number="3">ಇಲ್ಲವಾದರೆ ಅವಳನ್ನು ನಗ್ನವಾಗಿಸಿ (ಹುಟ್ಟಿದಾಗ ಇದ್ದಂತೆ) ಬೆತ್ತಲೆಯಾಗಿ ನಿಲ್ಲಿಸುವೆನು. ಅವಳನ್ನು ಬೆಂಗಾಡನ್ನಾಗಿ ಮಾಡಿ, ಮರುಭೂಮಿಯಂತೆ ಮಾರ್ಪಡಿಸಿ, ನೀರಡಿಕೆಯಿಂದ ಸಾಯುವಂತೆ ಮಾಡುವೆನು.</verse>
				<verse number="4">ಅವಳ ಮಕ್ಕಳಿಗೂ ಕರುಣೆಯನ್ನು ತೋರಿಸೆನು; ಅವರು ವ್ಯಭಿಚಾರದಿಂದ ಹುಟ್ಟಿದವರು.</verse>
				<verse number="5">ಅವರ ತಾಯಿ ವೇಶ್ಯೆಯಾಗಿದ್ದಾಳೆ. ಲಜ್ಜೆಗೆಟ್ಟ ಹೆಂಗಸಾಗಿ ವರ್ತಿಸಿದ್ದಾಳೆ. ‘ನನಗೆ ಅನ್ನಪಾನ, ಉಣ್ಣೆ ಉಡಿಗೆ, ಎಣ್ಣೆತೈಲ, ಪಾಯಸಪಾನಕಗಳನ್ನು ಕೊಡುವಂಥ ನಲ್ಲರ ಹಿಂದೆ ಹೋಗುವೆನು’ ಎಂದುಕೊಂಡಿದ್ದಾಳೆ.</verse>
				<verse number="6">ಆದುದರಿಂದ ನಾನು ಅವಳ ದಾರಿಗೆ ಮುಳ್ಳುಬೇಲಿಹಾಕುವೆನು. ಇಷ್ಟಬಂದ ದಾರಿಯನ್ನು ಹಿಡಿಯದಂತೆ ಅವಳ ಮುಂದೆ ಅಡ್ಡಗೋಡೆಯನ್ನು ಎಬ್ಬಿಸುವೆನು.</verse>
				<verse number="7">ಅವಳು ತನ್ನ ನಲ್ಲರನ್ನು ಹಿಂದಟ್ಟಿ ಹೋದರೂ ಅವರನ್ನು ಸಂಧಿಸಲಾರಳು; ಅವರನ್ನು ಹುಡುಕಿದರೂ ಕಂಡುಹಿಡಿಯಲಾರಳು. ಆಗ ಅವಳು: ‘ನನ್ನನ್ನು ಮದುವೆಯಾದ ಪತಿಯ ಬಳಿಗೆ ಹಿಂತಿರುಗುವೆನು. ಈಗಿನ ಸ್ಥಿತಿಗಿಂತ ಆಗಿನ ಸ್ಥಿತಿಯೇ ಉತ್ತಮವಾಗಿತ್ತು’ ಎಂದುಕೊಳ್ಳುವಳು.</verse>
				<verse number="8">ಅವಳಿಗೆ ದವಸಧಾನ್ಯ, ದ್ರಾಕ್ಷಾರಸ, ತೈಲಗಳನ್ನು ಕೊಟ್ಟವನು ನಾನೇ ಎಂಬುದನ್ನು ಅರಿತುಕೊಳ್ಳದೆಹೋದಳು. ನಾನು ಧಾರಾಳವಾಗಿ ಕೊಟ್ಟ ಬೆಳ್ಳಿಬಂಗಾರಗಳನ್ನು ಬಾಳನ ಪೂಜೆಗೆ ಉಪಯೋಗಿಸಿದಳು.</verse>
				<verse number="9">ಆದಕಾರಣ ನಾನು ದವಸಧಾನ್ಯ, ದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು. ಅವಳ ಮಾನವನ್ನು ಮುಚ್ಚುತ್ತಿದ್ದ ಉಣ್ಣೆಉಡಿಗೆಗಳನ್ನು ಹಿಂತೆಗೆದುಕೊಳ್ಳುವೆನು.</verse>
				<verse number="10">ಅವಳ ನಲ್ಲರ ಕಣ್ಣೆದುರಿಗೆ ಅವಳ ಲಜ್ಜೆಗೇಡಿತನವನ್ನು ಬಯಲುಮಾಡುವೆನು. ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.</verse>
				<verse number="11">ಅವಳ ಸಂಭ್ರಮಗಳನ್ನು - ಹಬ್ಬ, ಹುಣ್ಣಿಮೆ, ಸಬ್ಬತ್ ಆಚರಣೆ, ಸಭೆಸಮಾರಂಭಗಳು - ಇವೆಲ್ಲವನ್ನೂ ನಿಲ್ಲಿಸಿಬಿಡುವೆನು.</verse>
				<verse number="12">‘ನನ್ನ ನಲ್ಲರು ನನಗೆ ಉಡುಗೊರೆಯಾಗಿ ಕೊಟ್ಟವುಗಳು’ ಎಂದು ಅವಳು ಹೇಳಿಕೊಳ್ಳುವ ದ್ರಾಕ್ಷಾಲತೆಗಳನ್ನೂ ಅಂಜೂರದ ವೃಕ್ಷಗಳನ್ನೂ ನಾಶಪಡಿಸುವೆನು. ಅವುಗಳನ್ನು ಕಾಡುಪೊದೆಗಳನ್ನಾಗಿ ಮಾರ್ಪಡಿಸುವೆನು. ಕಾಡುಮೃಗಗಳು ಅವುಗಳನ್ನು ಕಬಳಿಸುವುವು.</verse>
				<verse number="13">ಅವಳು ನನ್ನನ್ನು ಮರೆತುಬಿಟ್ಟಿದ್ದಾಳೆ; ಬಂಗಾರದ ಮೂಗುತಿ ಮುಂತಾದ ಒಡವೆಗಳಿಂದ ಶೃಂಗರಿಸಿಕೊಂಡು ನಲ್ಲರನ್ನು ವರಿಸುತ್ತಾ ಹೋಗಿದ್ದಾಳೆ. ಅಷ್ಟೇ ಅಲ್ಲ, ಬಾಳ್ ದೇವತೆಗಳ ಹಬ್ಬದಲ್ಲಿ ಧೂಪಾರತಿಯನ್ನು ಬೆಳಗಿದ್ದಾಳೆ. ಈ ಕಾರಣ ನಾನು ಅವಳನ್ನು ದಂಡಿಸುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ.</verse>
				<verse number="14">ಆದುದರಿಂದ ಇಗೋ, ನಾನು ಅವಳನ್ನು ಪುನಃ ಬೆಂಗಾಡಿಗೆ ಕರೆದೊಯ್ಯುವೆನು. ಹೃದಯಂಗಮವಾಗಿ ಅವಳನ್ನು ಒಲಿಸಿಕೊಂಡು ಮಾತಾಡುವೆನು.</verse>
				<verse number="15">ಅವಳ ದ್ರಾಕ್ಷಾತೋಟಗಳನ್ನು ಅಲ್ಲಿಯೇ ಅವಳಿಗೆ ಹಿಂದಿರುಗಿಕೊಡುವೆನು. ಆಕೋರಿನ ಕಣಿವೆಯನ್ನು ಅವಳ ಆಶಾದ್ವಾರವನ್ನಾಗಿ ಮಾಡುವೆನು. ಅವಳು ತನ್ನ ಯೌವನದ ದಿನಗಳಲ್ಲಿಯೂ ಈಜಿಪ್ಟಿನಿಂದ ಬಿಡುಗಡೆಯಾಗಿ ಬಂದ ಸಮಯದಲ್ಲಿಯೂ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು.</verse>
				<verse number="16">ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನಗಳಲ್ಲಿ ನೀನು ನನ್ನನ್ನು ‘ಬಾಳ್‍ದೇವತೆ’ ಎಂದು ಕರೆಯದೆ ‘ನನ್ನ ಪತಿ’ ಎಂದು ಕರೆಯುವೆ.</verse>
				<verse number="17">ಬಾಳ್‍ದೇವತೆಗಳ ಹೆಸರುಗಳನ್ನು ನಿನ್ನ ಬಾಯಿಂದ ತೊಲಗಿಸುವೆನು; ಇನ್ನೆಂದಿಗೂ ಅವುಗಳನ್ನು ನೀನು ಉಚ್ಛರಿಸದಂತೆ ಮಾಡುವೆನು.</verse>
				<verse number="18">ಆ ದಿನಗಳಲ್ಲಿ ನನ್ನ ಜನರಿಗೆ ಹಾನಿಮಾಡದಂತೆ ಕಾಡಿನ ಮೃಗಗಳೊಂದಿಗೂ, ಆಕಾಶದ ಪಕ್ಷಿಗಳೊಂದಿಗೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳೊಂದಿಗೂ ಒಪ್ಪಂದಮಾಡಿಕೊಳ್ಳುವೆನು. ಬಿಲ್ಲುಬಾಣ, ಕತ್ತಿಕಠಾರಿಗಳು ಅವರ ನಾಡಿನಲ್ಲಿ ಇಲ್ಲದಂತೆ ಮಾಡುವೆನು; ನನ್ನ ಜನರು ಸುರಕ್ಷಿತವಾಗಿ ನೆಲಸುವಂತೆ ಮಾಡುವೆನು.</verse>
				<verse number="19">ನನ್ನವಳನ್ನಾಗಿ ಮಾಡಿಕೊಳ್ಳುವೆನು ನಿನ್ನನ್ನು ಅನವರತ ನಿನ್ನ ವರಿಸುವೆನು ಕರುಣೆಯಿಂದ, ನೀತಿನ್ಯಾಯದಿಂದ, ನಿಶ್ಚಲ ಪ್ರೀತಿಯಿಂದ.</verse>
				<verse number="20">ನಂಬಿಕೆಯಿಂದ ಸ್ವೀಕರಿಸುವೆನು ನಿನ್ನನು ಆಗ ನೀ ಅರಿತುಕೊಳ್ಳುವೆ ಸರ್ವೇಶ್ವರನಾದ ನನ್ನನು.</verse>
				<verse number="21">ಸರ್ವೇಶ್ವರ ಇಂತೆನ್ನುತ್ತಾರೆ: ಆ ದಿನದಂದು ಪ್ರೀತಿಸುವೆನು ನಿನ್ನನು; ಆಲಿಸುವೆನು ಆಗಸದ ಮೊರೆಯನು.</verse>
				<verse number="22">ಆಗಸವು ಆಲಿಸುವುದು ಭೂಮಿಯ ಮೊರೆಯನು ಇವು ಆಲಿಸುವುವು ಇಸ್ರಯೇಲಿನ ಮೊರೆಯನು.</verse>
				<verse number="23">ನನ್ನ ನಾಮದ ಪ್ರಯುಕ್ತವೇ, ಮಾಡುವೆನು ಇಸ್ರಯೇಲ್ ಏಳಿಗೆಯಾಗುವಂತೆ ಜಗದೊಳಗೆ ತೋರಿಸುವೆನು ಪ್ರೀತಿವಾತ್ಸಲ್ಯವನ್ನು ಲೋರುಹಾಮಳಿಗೆ ಹೇಳುವೆನು ‘ನೀನು ನನ್ನ ಪ್ರಜೆ’ಯೆಂದು ಲೋಅಮ್ಮಿಗೆ ಭಜಿಸುವರವರು ‘ನೀವೇ ನಮ್ಮ ದೇವರು’ ಎಂದು ನನಗೆ.</verse>
			</chapter>
			<chapter number="3">
				<verse number="1">ಅನಂತರ ಸರ್ವೇಶ್ವರ ನನಗೆ ಹೇಳಿದ್ದೇನೆಂದರೆ: “ನನ್ನ ಜನರಾದ ಇಸ್ರಯೇಲಿನವರು ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು, ಅವುಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ಬಯಸುತ್ತಾರೆ. ಆದರೂ ಸರ್ವೇಶ್ವರ ಅವರನ್ನು ಪ್ರೀತಿಸುತ್ತಾರೆ. ಇದಕ್ಕೆ ನಿದರ್ಶನವಾಗಿ, ನೀನು ಹೋಗಿ, ಜಾರನಿಗೆ ಪ್ರಿಯಳೂ ಮತ್ತು ವ್ಯಭಿಚಾರಿಣಿಯೂ ಆದ ಸ್ತ್ರೀಯೊರ್ವಳನ್ನು ಪ್ರೀತಿಸು.”</verse>
				<verse number="2">ಅಂತೆಯೇ ನಾನು ಹದಿನೈದು ಬೆಳ್ಳಿ ನಾಣ್ಯಗಳು ಮತ್ತು 150 ಕಿಲೋಗ್ರಾಂ. ಜವೆಗೋದಿಯನ್ನು ಕೊಟ್ಟು, ಅಂಥವಳನ್ನು ನನಗಾಗಿ ಕೊಂಡುಕೊಂಡೆನು.</verse>
				<verse number="3">ಆಮೇಲೆ ಅವಳಿಗೆ: “ದೀರ್ಘಕಾಲ ನನ್ನವಳಾಗಿ ಜೀವಿಸು. ಇನ್ನು ಮುಂದೆ ವ್ಯಭಿಚಾರಮಾಡಬೇಡ. ಇತರರ ಸಹವಾಸ ನಿನಗೆ ಬೇಡ. ನಾನು ಸಹ ಅದರಂತೆಯೇ ನಿನ್ನವನಾಗಿ ಜೀವಿಸುವೆನು,” ಎಂದೆನು.</verse>
				<verse number="4">ಹೀಗಿರಲು, ಅನೇಕ ದಿನಗಳವರೆಗೆ ಇಸ್ರಯೇಲಿನಲ್ಲಿ ರಾಜಯುವರಾಜರುಗಳು ಆಳ್ವಿಕೆ ನಡೆಸುವುದಿಲ್ಲ. ಬಲಿಯರ್ಪಣೆಗಳು ಇರುವುದಿಲ್ಲ. ವಿಗ್ರಹವೇದಿಕೆಗಳು ಅವರ ಮಧ್ಯೆ ಕಂಡುಬರುವುದಿಲ್ಲ, ಮಾಟಮಂತ್ರ ನಡೆಯುವುದಿಲ್ಲ.</verse>
				<verse number="5">ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.</verse>
			</chapter>
			<chapter number="4">
				<verse number="1">ಇಸ್ರಯೇಲಿನವರೇ, ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಆಲಿಸಿರಿ: “ಈ ದೇಶದಲ್ಲಿ ಸತ್ಯ, ಪ್ರೀತಿ, ಭಕ್ತಿ ಎಂಬುದೇ ಇಲ್ಲ. ಇಲ್ಲಿನ ನಿವಾಸಿಗಳ ಮೇಲೆ ಸರ್ವೇಶ್ವರ ಆಪಾದನೆ ಹೊರಿಸಿದ್ದಾರೆ.</verse>
				<verse number="2">ಸುಳ್ಳುಸಾಕ್ಷಿ, ನರಹತ್ಯೆ, ಕಳ್ಳತನ, ವ್ಯಭಿಚಾರ ಇವೆಲ್ಲ ತುಂಬಿಕೊಂಡಿವೆ; ದೊಂಬಿದಾಂಧಲೆಗಳು ನಡೆಯುತ್ತಿವೆ, ನಾಡೆಲ್ಲ ರಕ್ತಮಯವಾಗಿದೆ.</verse>
				<verse number="3">ಇದರಿಂದ ನಾಡು ಶೋಕಸಾಗರದಲ್ಲಿ ಮುಳುಗಿದೆ. ಅದರ ನಿವಾಸಿಗಳೆಲ್ಲ ನರಳುತ್ತಿದ್ದಾರೆ. ನೆಲದ ಮೇಲಿನ ಜಂತುಗಳು, ಆಕಾಶದ ಪಕ್ಷಿಗಳು ಬಳಲುತ್ತಿವೆ. ಜಲಜಂತುಗಳು ಸಹ ನಶಿಸಿಹೋಗುತ್ತಿವೆ.</verse>
				<verse number="4">“ಯಾರೂ ಪ್ರತಿಭಟಿಸದಿರಲಿ, ಯಾರೂ ಜನರನ್ನು ಖಂಡಿಸದಿರಲಿ. ನನ್ನ ಆಪಾದನೆ ಇರುವುದು, ಎಲೈ ಯಾಜಕರೇ, ನಿಮ್ಮ ಮೇಲೆಯೇ.</verse>
				<verse number="5">ಹಗಲಿನಲ್ಲೇ ನೀವು ಮುಗ್ಗರಿಸುತ್ತೀರಿ. ರಾತ್ರಿಯಲ್ಲಿ ಪ್ರವಾದಿಗಳು ಸಹ ನಿಮ್ಮೊಂದಿಗೆ ಮುಗ್ಗರಿಸುತ್ತಾರೆ. ನಿಮ್ಮ ವಂಶವೃಕ್ಷವನ್ನೇ ನಾನು ನಿರ್ಮೂಲಮಾಡುವೆನು.</verse>
				<verse number="6">ಜನರು ಜ್ಞಾನಹೀನರಾಗಿ ಅಳಿದುಹೋಗುತ್ತಿದ್ದಾರೆ. “ನೀವು ದೈವಜ್ಞಾನವನ್ನು ತಿರಸ್ಕರಿಸಿದ್ದೀರಿ; ನಾನು ಸಹ ಯಾಜಕವರ್ಗದಿಂದ ನಿಮ್ಮನ್ನು ವರ್ಜಿಸಿಬಿಡುತ್ತೇನೆ. ನೀವು ದೇವರ ಧರ್ಮೋಪದೇಶವನ್ನು ಮರೆತುಬಿಟ್ಟಿದ್ದೀರಿ; ನಾನು ನಿಮ್ಮ ಮಕ್ಕಳನ್ನು ಮರೆತುಬಿಡುತ್ತೇನೆ.</verse>
				<verse number="7">“ಅವರ ಸಂತಾನ ಹೆಚ್ಚಿದ ಹಾಗೆಲ್ಲ ಅವರು ನನ್ನ ವಿರುದ್ಧ ಪಾಪಮಾಡುತ್ತಾ ಬಂದಿದ್ದಾರೆ. ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುತ್ತೇನೆ.</verse>
				<verse number="8">ನನ್ನ ಜನರ ಪಾಪವೇ ಅವರಿಗೆ ಜೀವನಾಧಾರ. ಎಂತಲೇ ಅವರು ಪಾಪಕೃತ್ಯಗಳನ್ನೇ ಅಧಿಕವಾಗಿ ಬಯಸುತ್ತಾರೆ.</verse>
				<verse number="9">ಪ್ರಜೆಗಳಂತೆಯೇ ಯಾಜಕ, ನಿಮ್ಮ ದುಷ್ಕೃತ್ಯಗಳಿಗೆ ತಕ್ಕ ದಂಡನೆಯನ್ನು ವಿಧಿಸುತ್ತೇನೆ. ಅವುಗಳ ಪ್ರತಿಫಲವನ್ನು ನೀವೇ ಅನುಭವಿಸುವಂತೆ ಮಾಡುತ್ತೇನೆ.</verse>
				<verse number="10">ಎಷ್ಟು ತಿಂದರೂ ನಿಮಗೆ ತೃಪ್ತಿಯಾಗದು. ಎಷ್ಟು ವ್ಯಭಿಚಾರಗೈದರೂ ನಿಮಗೆ ಸಂತಾನ ಪ್ರಾಪ್ತಿಯಾಗದು. ಕಾರಣ, ನೀವು ವೇಶ್ಯಾಚಾರಕ್ಕಾಗಿ ಸರ್ವೇಶ್ವರನನ್ನೇ ತಿರಸ್ಕರಿಸಿದ್ದೀರಿ.</verse>
				<verse number="11">“ಮದ್ಯಪಾನ, ದ್ರಾಕ್ಷಾರಸ - ಇವು ಜನರನ್ನು ಬುದ್ಧಿಹೀನರನ್ನಾಗಿ ಮಾಡುತ್ತವೆ.</verse>
				<verse number="12">ನನ್ನ ಜನರು ಮರದ ತುಂಡನ್ನು ಹಿಡಿದು ಕಣಿ ಕೇಳುತ್ತಾರೆ; ಕೈಯಲ್ಲಿ ಹಿಡಿದ ದೊಣ್ಣೆಯಿಂದ ವಿವೇಕವಾಣಿಯನ್ನು ಪಡೆಯಲೆತ್ನಿಸುತ್ತಾರೆ. ವ್ಯಭಿಚಾರಗುಣ ಅವರನ್ನು ತಪ್ಪುದಾರಿಗೆ ಎಳೆದಿದೆ. ದೇವರ ಸದ್ಭಕ್ತಿಯನ್ನು ತೊರೆದು ಅವರು ಧರ್ಮಭ್ರಷ್ಠರಾಗಿದ್ದಾರೆ.</verse>
				<verse number="13">ಅವರು ಗಿರಿಶಿಖರಗಳ ಮೇಲೆ ಬಲಿಯನರ್ಪಿಸುತ್ತಾರೆ. ಬೆಟ್ಟಗುಡ್ಡಗಳ ಮೇಲೆ ಧೂಪಹಾಕುತ್ತಾರೆ. ದಟ್ಟ ನೆರಳಿನ ಅಲ್ಲೋನ್, ಲಿಬ್ನೆ, ಏಲಾ ವೃಕ್ಷಗಳ ಅಡಿಯಲ್ಲಿ ಇಂತಹುದನ್ನೆಲ್ಲ ಮಾಡುತ್ತಾರೆ. ಹೀಗಿರಲು ನಿಮ್ಮ ಪುತ್ರಿಯರು ಸೂಳೆಯರಾಗುವರು. ನಿಮ್ಮ ಸೊಸೆಗಳು ವ್ಯಭಿಚಾರಿಣಿಗಳಾಗುವರು. ಇದರಲ್ಲಿ ಆಶ್ಚರ್ಯವೇನಿಲ್ಲ.</verse>
				<verse number="14">ಸೂಳೆಯರಾಗಿ ನಡೆಯುವ ಪುತ್ರಿಯರನ್ನು ನಾನು ದಂಡಿಸುವುದಿಲ್ಲ, ವ್ಯಭಿಚಾರ ಮಾಡುವ ಸೊಸೆಗಳನ್ನು ನಾನು ಶಿಕ್ಷಿಸುವುದಿಲ್ಲ. ಕಾರಣ, ನೀವೇ ಸೂಳೆಯರನ್ನು ಸೇರಿಕೊಂಡು ಅಡ್ಡದಾರಿ ಹಿಡಿಯುತ್ತೀರಿ. ದೇವದಾಸಿಯರೊಂದಿಗೆ ಸೇರಿ ಬಲಿಯನ್ನು ಅರ್ಪಿಸುತ್ತೀರಿ. ‘ಮತಿಹೀನರು ಗತಿಸಿಹೋಗುವರು’ ಎಂಬ ಹೇಳಿಕೆ ಖಂಡಿತವಾಗಿ ನಿಮಗೆ ಅನ್ವಯಿಸುತ್ತದೆ.</verse>
				<verse number="15">“ಓ ಇಸ್ರಯೇಲ್ ನೀನು ವೇಶ್ಯೆಯಾಗಿ ನಡೆದರೂ ಜುದೇಯ ನಾಡು ಆ ದೋಷಕ್ಕೆ ಒಳಗಾಗದಿರಲಿ. ಯೆಹೂದ್ಯರೇ, ಗಿಲ್ಗಾಲಿಗೆ ಬರಬೇಡಿ. ಬೇತಾವೆನಿಗೆ ಯಾತ್ರೆ ಹೋಗಬೇಡಿ. ‘ಜೀವಸ್ವರೂಪನಾದ ಸರ್ವೇಶ್ವರನಾಣೆ’ ಎಂದು ಪ್ರಮಾಣಮಾಡಬೇಡಿ.</verse>
				<verse number="16">ಇಸ್ರಯೇಲಿನವರು ಹತೋಟಿಗೆ ಬಾರದ ಹೋರಿಯಂತೆ ಮೊಂಡಾಗಿದ್ದಾರೆ. ಸರ್ವೇಶ್ವರ ಅವರನ್ನು ಈಗ ವಿಶಾಲವಾದ ಹುಲ್ಲುಗಾವಲುಗಳಲ್ಲಿ ಕುರಿಗಳಂತೆ ಮೇಯಿಸಲು ಸಾಧ್ಯವೇ?</verse>
				<verse number="17">ಎಫ್ರಯಿಮ್ ವಿಗ್ರಹಗಳ ಪ್ರಭಾವಕ್ಕೆ ಒಳಗಾಗಿದೆ. ಅದನ್ನು ಅದರಷ್ಟಕ್ಕೆ ಬಿಟ್ಟುಬಿಡಿ.</verse>
				<verse number="18">ಅವರು ಮದ್ಯಪಾನವನ್ನು ಮಾಡಿದ ನಂತರ ವ್ಯಭಿಚಾರಕ್ಕೆ ಇಳಿಯುತ್ತಾರೆ. ಮಾನಕ್ಕಿಂತ ಅವಮಾನವೇ ಅವರಿಗೆ ಅತಿ ಪ್ರಿಯ.</verse>
				<verse number="19">ಬಿರುಗಾಳಿ ಅವರನ್ನು ಬಡಿದೆತ್ತಿಕೊಂಡು ಹೋಗುವುದು. ಅವರು ವಿಗ್ರಹಗಳಿಗೆ ಅರ್ಪಿಸುತ್ತಿದ್ದ ಬಲಿಗಳಿಗಾಗಿ ನಾಚಿಕೆಪಡುವರು.</verse>
			</chapter>
			<chapter number="5">
				<verse number="1">“ಯಾಜಕರೇ, ಕೇಳಿ: ಇಸ್ರಯೇಲ್ ಮನೆತನದವರೇ, ಗಮನಿಸಿ. ರಾಜವಂಶದವರೇ ಕಿವಿಗೊಡಿ.</verse>
				<verse number="2">ನೀವು ಮಿಚ್ಪದಲ್ಲಿ ಉರುಲಾಗಿದ್ದೀರಿ. ತಾಬೋರಿನಲ್ಲಿ ಬಲೆಯಾಗಿದ್ದೀರಿ. ಶಿಟ್ಟಿಮಿನಲ್ಲಿ ಆಳವಾದ ಕಂದಕವನ್ನು ತೋಡಿದ್ದೀರಿ. ನಿಮ್ಮ ವಿರುದ್ಧ ತೀರ್ಪುಬಂದಿದೆ. ನಿಮ್ಮೆಲ್ಲರನ್ನು ಶಿಕ್ಷಿಸುವೆನು.</verse>
				<verse number="3">ಎಫ್ರಯಿಮನ್ನು ಬಲ್ಲೆನು; ಇಸ್ರಯೇಲ್ ನನಗೆ ಕಣ್ಮರೆಯಾಗಿಲ್ಲ. ಎಫ್ರಯಿಮ್, ನೀನು ವ್ಯಭಿಚಾರಿಣಿಯಾಗಿರುವೆ. ಇಸ್ರಯೇಲ್, ನೀನು ಹೊಲಸಾಗಿರುವೆ.”</verse>
				<verse number="4">ಅವರು ತಮ್ಮ ದೇವರ ಬಳಿಗೆ ಹಿಂದಿರುಗದಂತೆ ಅವರ ದುಷ್ಕೃತ್ಯಗಳು ಅವರಿಗೆ ಅಡ್ಡಿಯಾಗಿವೆ. ವ್ಯಭಿಚಾರ ಅವರಲ್ಲಿ ನೆಲೆಗೊಂಡಿದೆ. ಅವರು ಸರ್ವೇಶ್ವರನನ್ನು ಅರಿಯರು.</verse>
				<verse number="5">ಇಸ್ರಯೇಲಿನ ಅಹಂಕಾರವೇ ಅದಕ್ಕೆ ವಿರುದ್ಧ ಸಾಕ್ಷಿ ನುಡಿಯುತ್ತದೆ. ಇಸ್ರಯೇಲ್ ಮತ್ತು ಎಫ್ರಯಿಮ್ ತಮ್ಮ ದುರ್ಮಾರ್ಗದಲ್ಲಿ ಮುಗ್ಗರಿಸಿ ಬೀಳುತ್ತವೆ. ಜುದೇಯವೂ ಅದರಂತೆಯೇ ಬೀಳಲಿದೆ.</verse>
				<verse number="6">ಅವರು ತಮ್ಮ ದನಕುರಿಗಳೊಂದಿಗೆ ಸರ್ವೇಶ್ವರಸ್ವಾಮಿಯನ್ನು ಅರಸಿಹೋದರೂ, ಅವರನ್ನು ಕಾಣರು. ಸರ್ವೇಶ್ವರ ಅವರಿಂದ ಮರೆಯಾಗಿದ್ದಾರೆ.</verse>
				<verse number="7">ಅವರು ವ್ಯಭಿಚಾರದಿಂದ ಸರ್ವೇಶ್ವರಸ್ವಾಮಿಗೆ ದ್ರೋಹವೆಸಗಿದ್ದಾರೆ. ಅವರ ಮಕ್ಕಳು ಆ ಸ್ವಾಮಿಯ ಮಕ್ಕಳಲ್ಲ; ಮುಂದಿನ ಅಮಾವಾಸ್ಯೆಯೊಳಗಾಗಿ ಅವರು ನಾಶವಾಗುವರು. ಅವರ ಸ್ವತ್ತೆಲ್ಲಾ ಅಳಿದುಹೋಗುವುದು.</verse>
				<verse number="8">ಗಿಬ್ಯದಲ್ಲಿ ತುತೂರಿಯನ್ನು ಊದಿರಿ, ರಮಾದಲ್ಲಿ ಕೊಂಬನ್ನು ಮೊಳಗಿಸಿರಿ; ಬೇತಾವೆನಿನಲ್ಲಿ ಕಾಳಗದ ಕರೆನೀಡಿರಿ. ಬೆನ್ಯಾಮಿನೇ, ನಿನ್ನನ್ನು ಬೆನ್ನಟ್ಟಿಬರುತ್ತಿರುವವರನ್ನು ನೋಡು.</verse>
				<verse number="9">ದಂಡನೆಯ ದಿನದಲ್ಲಿ ಎಫ್ರಯಿಮ್ ಹಾಳಾಗುವುದು. ಇಗೋ, ಇಸ್ರಯೇಲಿನ ಕುಲಗಳ ಭವಿಷ್ಯವನ್ನು ಖಚಿತವಾಗಿ ತಿಳಿಸಿದ್ದೇನೆ:</verse>
				<verse number="10">“ಜುದೇಯದ ಮುಖಂಡರು, ಗಡಿದಾಟಿ ಆಕ್ರಮಣಮಾಡುವವರನ್ನು ಹೋಲುತ್ತಾರೆ. ಅವರ ಮೇಲೆ ನನ್ನ ಕೋಪಾಗ್ನಿಯನ್ನು ಸುರಿಸುತ್ತೇನೆ.</verse>
				<verse number="11">ದುರಾಚಾರಗಳನ್ನು ಅನುಸರಿಸಲು ನಿರ್ಧರಿಸಿದ ಕಾರಣ, ಎಫ್ರಯಿಮ್ ನ್ಯಾಯತೀರ್ಪಿಗೆ ಗುರಿಯಾಗಿದೆ; ಹಿಂಸೆಗೀಡಾಗಿದೆ; ನುಚ್ಚುನೂರಾಗಿದೆ.</verse>
				<verse number="12">ನಾನು ಎಫ್ರಯಿಮಿಗೆ ನುಸಿಯಾಗಿದ್ದೇನೆ; ಯೆಹೂದ ಕುಲಕ್ಕೆ ಕುಟ್ಟೆಯಾಗಿದ್ದೇನೆ.</verse>
				<verse number="13">“ಎಫ್ರಯಿಮ್ ತನ್ನ ರೋಗವನ್ನು ಅರಿತುಕೊಂಡಿತು; ಜುದೇಯವು ತನ್ನ ಹುಣ್ಣನ್ನು ಕಂಡುಕೊಂಡಿತು. ಆಗ ಎಫ್ರಯಿಮ್ ಅಸ್ಸೀರಿಯಾದ ಕಡೆಗೆ ತಿರುಗಿಕೊಂಡು ಜಗಳಗಂಟಿಯಾದ ರಾಜನ ಬಳಿಗೆ ದೂತರನ್ನು ಕಳುಹಿಸಿತು. ಆದರೆ ಅವನು ನಿಮ್ಮ ರೋಗವನ್ನು ವಾಸಿಮಾಡಲಾರನು, ನಿಮ್ಮ ಹುಣ್ಣನ್ನು ಗುಣಪಡಿಸಲಾರನು.</verse>
				<verse number="14">ಎಫ್ರಯಿಮಿಗೆ ನಾನು ಸಿಂಹ; ಯೆಹೂದ್ಯಕುಲಕ್ಕೆ ಪ್ರಾಯದ ಸಿಂಹ; ಅದನ್ನು ಸೀಳಿಬಿಡುವೆನು; ಎಳೆದುಕೊಂಡು ಹೋಗುವೆನು; ಯಾರೂ ಅದನ್ನು ನನ್ನಿಂದ ಬಿಡಿಸಿಕೊಳ್ಳಲಾರರು.</verse>
				<verse number="15">“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”</verse>
			</chapter>
			<chapter number="6">
				<verse number="1">ನನ್ನನ್ನು ಜನರು ಮರೆಹೋಗುತ್ತಾ ಹೀಗೆನ್ನುವರು: “ಬನ್ನಿ, ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು.</verse>
				<verse number="2">ಮೂರನೆಯ ದಿನದಲ್ಲಿ ಅವರು ನಮ್ಮನ್ನು ಎಬ್ಬಿಸುವರು. ಆಗ ನಾವು ಅವರ ಸನ್ನಿಧಿಯಲ್ಲಿ ಬಾಳುವೆವು.</verse>
				<verse number="3">ನಿರಂತರವಾಗಿ ಹುಡುಕಿ ಅವರನ್ನು ಕಂಡುಕೊಳ್ಳೋಣ; ಸರ್ವೇಶ್ವರಸ್ವಾಮಿಯನ್ನು ಅರಿತುಕೊಳ್ಳೋಣ; ಅವರ ಆಗಮನ ಸೂರ್ಯೋದಯದಂತೆ ನಿಶ್ಚಯ. ಭೂಮಿಯನ್ನು ತಣಿಸುವ ಮುಂಗಾರು ಹಿಂಗಾರು ಮಳೆಗಳಂತೆ ಅವರು ನಮ್ಮ ಬಳಿಗೆ ಬಂದೇ ಬರುವರು.</verse>
				<verse number="4">ಆದರೆ ಸರ್ವೇಶ್ವರ ಹೇಳುವುದೇನೆಂದರೆ: “ಎಫ್ರಯಿಮೇ, ನಾನು ನಿನ್ನನ್ನು ಹೇಗೆ ತಿದ್ದಲಿ? ಜುದೇಯವೇ, ನಿನ್ನನ್ನು ಹೇಗೆ ಸರಿಪಡಿಸಲಿ? ನಿಮ್ಮ ಭಕ್ತಿ ಪ್ರಾತಃಕಾಲದ ಮೋಡದಂತಿದೆ; ಬೇಗನೆ ಮಾಯವಾಗುವ ಇಬ್ಬನಿಯಂತಿದೆ.</verse>
				<verse number="5">ಖಂಡತುಂಡವಾದ ತೀರ್ಪುನೀಡುವ, ಕತ್ತಿಯಂತೆ ಹರಿತವಾಗಿ ಮಾತನಾಡುವ ನನ್ನ ಪ್ರವಾದಿಗಳನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ. ನನ್ನ ನ್ಯಾಯದಂಡನೆ ಮಿಂಚಿನಂತೆ ಹೊರಡುವುದು.</verse>
				<verse number="6">ನನಗೆ ಬೇಕಾದುದು ಕರುಣೆ, ಬಲಿಯರ್ಪಣೆಯಲ್ಲ; ನನಗೆ ಬೇಕಾದುದು ದೈವಜ್ಞಾನ, ದಹನಬಲಿ ದಾನವಲ್ಲ.</verse>
				<verse number="7">“ಆದಾಮನಂತೆ ಅವರು ನನ್ನ ಒಡಂಬಡಿಕೆಯನ್ನು ಉಲ್ಲಂಘಿಸಿದ್ದಾರೆ. ಅವನಂತೆ ಅವರು ನನಗೆ ದ್ರೋಹವೆಸಗಿದ್ದಾರೆ.</verse>
				<verse number="8">ಗಿಲ್ಯಾದು ದುಷ್ಟಜನರಿಂದ ತುಂಬಿದೆ. ಅವರು ತುಳಿಯುವ ಹಾದಿಗಳಲ್ಲೆಲ್ಲ ರಕ್ತಕಲೆಗಳೇ.</verse>
				<verse number="9">ದರೋಡೆಗಾರರು ದಾರಿಹೋಕರಿಗಾಗಿ ಹೊಂಚುಹಾಕುವಂತೆ ಯಾಜಕರು ಗುಂಪುಗೂಡಿ ಹೊಂಚುಹಾಕುತ್ತಾ, ಶೆಖೆಮಿಗೆ ಯಾತ್ರೆಹೋಗುವವರನ್ನು ಕೊಂದುಹಾಕುತ್ತಾರೆ. ಅವರು ಮಾಡುವುದು ನಿಜಕ್ಕೂ ಘೋರಕೃತ್ಯ.</verse>
				<verse number="10">ಇಸ್ರಯೇಲ್ ಮನೆತನದಲ್ಲಿ ಘೋರಕೃತ್ಯಗಳು ಕಾಣಿಸಿಕೊಂಡಿವೆ. ಅಲ್ಲಿ ಎಫ್ರಯಿಮಿನೊಳಗೆ ವೇಶ್ಯಾಚಾರ ನಡೆಯುತ್ತಿದೆ. ಇಸ್ರಯೇಲ್ ಕಲುಷಿತವಾಗಿದೆ.</verse>
				<verse number="11">“ಜುದೇಯವೇ, ನೀನು ಮಾಡುವ ದುಷ್ಕೃತ್ಯಗಳಿಗೆ ತಕ್ಕ ಸುಗ್ಗಿ ಕಾದಿದೆ.</verse>
			</chapter>
			<chapter number="7">
				<verse number="1">“ನಾನು ನನ್ನ ಜನರ ದುರವಸ್ಥೆಯನ್ನು ನೀಗಿಸಿ ಇಸ್ರಯೇಲನ್ನು ಸ್ವಸ್ಥಗೊಳಿಸಬೇಕೆಂದಿರುವಾಗ ಎಫ್ರಯಿಮಿನ ಅಕ್ರಮ ಮತ್ತು ಸಮಾರ್ಯದ ದುಷ್ಟತನ ಬಯಲಿಗೆ ಬರುತ್ತವೆ. ಅವರು ಒಬ್ಬರಿಗೊಬ್ಬರು ಮೋಸಮಾಡುತ್ತಾರೆ. ಕಳ್ಳರಂತೆ ನುಗ್ಗಿ ಕನ್ನಹಾಕುತ್ತಾರೆ. ದರೋಡೆಗಾರರಂತೆ ದಾರಿಯಲ್ಲೇ ಸುಲಿಗೆಮಾಡುತ್ತಾರೆ.</verse>
				<verse number="2">ಆದರೆ ಅವರ ದುಷ್ಕೃತ್ಯಗಳೆಲ್ಲ ಸರ್ವೇಶ್ವರಸ್ವಾಮಿಯ ಜ್ಞಾಪಕದಲ್ಲಿ ಇರುತ್ತವೆ ಎಂಬುದನ್ನು ಅವರು ಮನದಟ್ಟುಮಾಡಿಕೊಂಡಿಲ್ಲ. ಅವರ ನೀಚಕೃತ್ಯಗಳು ಅವರನ್ನು ಆವರಿಸಿಕೊಂಡಿವೆ; ನನ್ನ ಕಣ್ಮುಂದೆಯೇ ಇವೆ.</verse>
				<verse number="3">“ಅವರು ಅಧರ್ಮದಿಂದ ಅರಸನನ್ನು ಆನಂದಗೊಳಿಸುತ್ತಾರೆ; ಅಸತ್ಯದಿಂದ ಅಧಿಕಾರಿಗಳನ್ನು ಸಂತೋಷಪಡಿಸುತ್ತಾರೆ.</verse>
				<verse number="4">ಅವರೆಲ್ಲರು ವ್ಯಭಿಚಾರಿಗಳೇ; ಅವರು ಉರಿಯುವ ಒಲೆಗೆ ಸಮಾನರು. ರೊಟ್ಟಿಸುಡುವವನು ನಾದಿದ ಹಿಟ್ಟು ಹುಳಿಯಾಗುವವರೆಗೂ ಬಿಟ್ಟಿರುವ ಬೂದಿ ಮುಚ್ಚಿದ ಕೆಂಡಕ್ಕೆ ಸಮಾನರು.</verse>
				<verse number="5">ಅರಸನ ಹಬ್ಬದ ದಿನಗಳಲ್ಲಿ ಅಧಿಕಾರಿಗಳು ದ್ರಾಕ್ಷಾರಸವನ್ನು ಕುಡಿದು ಮತ್ತರಾಗುವಂತೆ ಮಾಡಿದರು. ಅರಸನು ಅಪಹಾಸ್ಯಮಾಡುವ ತುಂಟರ ಸಂಗಡ ಬೆರೆತುಕೊಂಡನು.</verse>
				<verse number="6">ಒಳಸಂಚಿನಿಂದ ಕೂಡಿದ ಅವರ ಹೃದಯ ಒಲೆಯಂತೆ ಉರಿಯುತ್ತದೆ. ಅವರ ಕೋಪಾಗ್ನಿ ರಾತ್ರಿಯೆಲ್ಲ ಹೊತ್ತಿಕೊಂಡೇ ಇರುತ್ತದೆ. ಬೆಳಗಾದದ್ದೇ ಧಗಧಗನೆ ಭುಗಿಲೇರುತ್ತದೆ.</verse>
				<verse number="7">“ಎಲ್ಲರು ಒಲೆಯಂತೆ ಉರಿಯುತ್ತ ತಮ್ಮ ಅಧಿಕಾರಿಗಳನ್ನೇ ನುಂಗಿಬಿಡುತ್ತಾರೆ. ಅವರ ಅರಸರೆಲ್ಲ ಸತ್ತುಬಿದ್ದಿದ್ದಾರೆ. ನನಗೆ ಮೊರೆಯಿಡುವವರು ಅವರಲ್ಲಿ ಯಾರೂ ಇಲ್ಲ.”</verse>
				<verse number="8">“ಎಪ್ರಯಿಮ್ ಅನ್ಯರಾಷ್ಟ್ರಗಳೊಂದಿಗೆ ಬೆರೆತುಕೊಳ್ಳುತ್ತದೆ. ಅದು ತಿರುವಿಹಾಕಿದ ರೊಟ್ಟಿ.</verse>
				<verse number="9">ಅನ್ಯಜನರು ಅದರ ಶಕ್ತಿಯನ್ನು ಹೀರಿಕೊಂಡರೂ ಅದಕ್ಕೆ ಅರಿವಿಲ್ಲ. ಅದರ ತಲೆಗೂದಲು ನೆರೆತುಹೋದರೂ ಅದಕ್ಕೆ ಪ್ರಜ್ಞೆ ಇಲ್ಲ.</verse>
				<verse number="10">ಇಸ್ರಯೇಲಿನ ಅಹಂಕಾರವೇ ಅದರ ವಿರುದ್ಧ ಸಾಕ್ಷಿ ನುಡಿಯುತ್ತದೆ. ಇಷ್ಟೆಲ್ಲ ಸಂಭವಿಸಿದರೂ ಅದು ತನ್ನ ದೇವರಾದ ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗುವುದಿಲ್ಲ; ಅವರನ್ನು ಆಶ್ರಯಿಸುವುದಿಲ್ಲ.</verse>
				<verse number="11">ಎಫ್ರಯಿಮ್ ಬುದ್ಧಿವಿವೇಕವಿಲ್ಲದ ಪಾರಿವಾಳದಂತೆ; ಅದರ ಜನರು ಈಜಿಪ್ಟನ್ನು ಸಹಾಯಕ್ಕೆ ಕರೆಯುತ್ತಾರೆ. ಅಸ್ಸೀರಿಯದ ಆಶ್ರಯಕ್ಕೆ ಓಡುತ್ತಾರೆ.</verse>
				<verse number="12">ಅವರು ಹೋಗುವಾಗ ನನ್ನ ಬಲೆಯನ್ನು ಅವರ ಮೇಲೆ ಬೀಸುವೆನು. ಆಕಾಶದ ಪಕ್ಷಿಗಳಂತೆ ಅವರನ್ನು ಕೆಳಕ್ಕೆ ಎಳೆದುಬಿಡುವೆನು. ಅವರ ದುಷ್ಕೃತ್ಯಗಳಿಗನುಸಾರ ಅವರನ್ನು ದಂಡಿಸುವೆನು.</verse>
				<verse number="13">“ನನ್ನನ್ನು ತೊರೆದುಬಿಟ್ಟದ್ದರಿಂದ ಅವರು ಹಾಳಾಗಲಿ, ನನಗೆ ದ್ರೋಹವೆಸಗಿದ್ದರಿಂದ ಅವರು ನಾಶವಾಗಲಿ! ನಾನು ಅವರನ್ನು ಉದ್ಧರಿಸಬೇಕೆಂದಿದ್ದರೂ ಅವರು ನನಗೆ ತಪ್ಪಾಗಿ ನಡೆದುಕೊಂಡಿದ್ದಾರೆ.</verse>
				<verse number="14">ಅವರು ಹೃದಯಪೂರ್ವಕವಾಗಿ ನನಗೆ ಪ್ರಾರ್ಥನೆಮಾಡುವುದಿಲ್ಲ. ಬದಲಿಗೆ ಅವರ ಹಾಸಿಗೆಗಳ ಮೇಲೆ ಬಿದ್ದು ಅರಚುತ್ತಾರೆ. ಧಾನ್ಯದ್ರಾಕ್ಷಾರಸಗಳಿಗಾಗಿ ಕಿರಿಚಿಕೊಳ್ಳುತ್ತಾರೆ. ನನಗೆ ವಿರುದ್ಧವಾಗಿ ಪ್ರತಿಭಟಿಸುತ್ತಾ ತಮ್ಮ ದೇಹಗಳನ್ನು ಪರಚಿಕೊಳ್ಳುತ್ತಾರೆ.</verse>
				<verse number="15">ನಾನೇ ಅವರಿಗೆ ಯುದ್ಧಾಭ್ಯಾಸ ಮಾಡಿಸಿ, ಅವರ ಭುಜಬಲವನ್ನು ಬೆಳೆಸಿದರೂ ನನ್ನ ವಿರುದ್ಧ ಕೇಡನ್ನು ಕಲ್ಪಿಸುತ್ತಾರೆ.</verse>
				<verse number="16">ಅವರು ಅತ್ತಿತ್ತ ತಿರುಗಿಕೊಳ್ಳುತ್ತಾರೆ. ದೇವರ ಕಡೆ ತಿರುಗಿಕೊಳ್ಳುವುದಿಲ್ಲ. ಅವರು ಮೋಸದ ಬಿಲ್ಲಿಗೆ ಸಮಾನರು. ಸೊಕ್ಕಿನ ನಾಲಿಗೆಯ ನಿಮಿತ್ತ ಅವರ ಮುಖಂಡರು ಹತರಾಗುವರು. ಅವರ ಪತನ ಈಜಿಪ್ಟಿಗೆ ಹಾಸ್ಯಾಸ್ಪದವಾಗುವುದು.”</verse>
			</chapter>
			<chapter number="8">
				<verse number="1">“ತುತೂರಿಯನ್ನು ಎತ್ತಿಕೊಂಡು ಊದು. ಶತ್ರುಗಳು ಹದ್ದಿನಂತೆ ದೇವರ ಆಲಯದ ಮೇಲೆ ಎರಗಿಬರುತ್ತಿದ್ದಾರೆ. ಕಾರಣ - ಜನರು ನನ್ನ ಒಡಂಬಡಿಕೆಯನ್ನು ಮೀರಿದ್ದಾರೆ, ನನ್ನ ವಿಧಿನಿಯಮಗಳನ್ನು ಉಲ್ಲಂಘಿಸಿದ್ದಾರೆ.</verse>
				<verse number="2">ನನ್ನನ್ನು ತಮ್ಮ ದೇವರೆಂದೂ ತಾವು ದೇವಜನರೆಂದೂ ನನ್ನನ್ನು ಅರಿತವರೆಂದೂ ಕೂಗಿಕೊಳ್ಳುತ್ತಾರೆ.</verse>
				<verse number="3">ಆದರೆ ಈ ಇಸ್ರಯೇಲರು ಸತ್ಯವನ್ನು ತೊರೆದುಬಿಟ್ಟಿದ್ದಾರೆ. ಎಂತಲೇ ಶತ್ರುಗಳು ಅವರನ್ನು ಬೆನ್ನಟ್ಟಿಹೋಗುವರು.</verse>
				<verse number="4">“ಅವರು ನನ್ನ ಅನುಮತಿ ಇಲ್ಲದೆ ಅರಸರನ್ನು ನೇಮಿಸಿಕೊಂಡಿದ್ದಾರೆ. ನನಗೆ ತಿಳಿಯದಂತೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ಬೆಳ್ಳಿಬಂಗಾರದ ವಿಗ್ರಹಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಮಾಡಿರುವುದೆಲ್ಲ ಅವರ ನಾಶಕ್ಕಾಗಿಯೇ.</verse>
				<verse number="5">ಸಮಾರಿಯವೇ, ನೀನು ನಿರ್ಮಿಸಿಕೊಂಡಿರುವ ಬಸವನನ್ನು ಧಿಕ್ಕರಿಸಿದ್ದೇನೆ. ನನ್ನ ಕೋಪಾಗ್ನಿ ನಿನ್ನ ಮೇಲೆ ಉರಿದುಬರುತ್ತಿದೆ. ಈ ಜನರು ನಿರ್ಮಲರಾಗುವುದಕ್ಕೆ ಇನ್ನೆಷ್ಟುಕಾಲ ಹಿಡಿಯುವುದೋ?</verse>
				<verse number="6">ಆ ಬಸವ ಇಸ್ರಯೇಲಿನ ಕೈಕೆಲಸವೇ. ಶಿಲ್ಪಿ ಕೊಟ್ಟ ರೂಪವದು; ಅದು ದೇವರಲ್ಲ. ಸಮಾರ್ಯದ ಬಸವನು ನುಚ್ಚುನೂರಾಗುವನು.</verse>
				<verse number="7">ಇವರು ಗಾಳಿಯನ್ನು ಬಿತ್ತುತ್ತಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅವರ ಪೈರು ತೆನೆಗೆ ಬಾರದು. ಕಾಳು ಮೊಳೆತರೂ ಕೂಳು ದೊರಕದು. ಒಂದು ವೇಳೆ ದೊರಕಿದರೂ ಅನ್ಯಜನರು ಅದನ್ನು ಕಬಳಿಸಿಬಿಡುವರು.</verse>
				<verse number="8">ಇಸ್ರಯೇಲನ್ನು ಕಬಳಿಸಲಾಗಿದೆ. ಈಗದು ಅನ್ಯಜನಾಂಗಗಳ ಮಧ್ಯೆ ಯಾರಿಗೂ ಬೇಡವಾದ ಮಡಕೆಯಂತಿದೆ.</verse>
				<verse number="9">ಅದು ಒಂಟಿಯಾಗಿ ಅಲೆಯುವ ಕಾಡುಕತ್ತೆಯಂತೆ ಅಸ್ಸೀರಿಯಕ್ಕೆ ಹೋಗಿದೆ; ಎಫ್ರಯಿಮ್ ಕಾಮುಕರಿಗೆ ತನ್ನನ್ನೇ ಮಾರಿಕೊಂಡಿದೆ.</verse>
				<verse number="10">ಹಣ ತೆತ್ತು ಅನ್ಯರಾಷ್ಟ್ರಗಳೊಡನೆ ಮೈತ್ರಿಬೆಳೆಸಿಕೊಂಡಿದ್ದರೂ ನಾನು ಶೀಘ್ರದಲ್ಲಿ ಅದನ್ನು ಸೆರೆಗೂಡಿಸಲಿರುವೆನು. ಅಸ್ಸೀರಿಯದ ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿದೆ.</verse>
				<verse number="11">“ಎಫ್ರಯಿಮ್ ಪಾಪಪರಿಹಾರಕ್ಕಾಗಿ ಬಲಿಪೀಠಗಳನ್ನು ಕಟ್ಟಿದೆ. ಆ ಬಲಿಪೀಠಗಳೇ ಅದರ ಪಾಪಕ್ಕೆ ಕಾರಣವಾಗಿ ಪರಿಣಮಿಸಿವೆ.</verse>
				<verse number="12">ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪದಲ್ಲಿ ಬರೆದುಕೊಟ್ಟರೂ ಅವುಗಳು ತನಗೆ ಪರಕೀಯವೆಂದು ಭಾವಿಸುತ್ತದೆ.</verse>
				<verse number="13">ಎಫ್ರಯಿಮಿನವರು ಬಲಿಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸುತ್ತಾರೆ, ವಧಿಸಿದ್ದನ್ನು ಭುಜಿಸುತ್ತಾರೆ. ಆದರೆ ಆ ಬಲಿಗಳನ್ನು ನಾನು ಮೆಚ್ಚುವುದಿಲ್ಲ. ಅವರ ಅಧರ್ಮವನ್ನು ನೆನಪಿಗೆ ತಂದುಕೊಂಡು ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವೆನು. ಆ ಜನರು ಈಜಿಪ್ಟಿಗೆ ಹಿಂದಿರುಗಬೇಕಾಗುವುದು.</verse>
				<verse number="14">“ಇಸ್ರಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ. ಜುದೇಯವು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ನಿರ್ಮಿಸಿಕೊಂಡಿದೆ. ಆದರೆ ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಕಾರುವೆನು. ಅದು ಆ ಸೌಧಗಳನ್ನು ನುಂಗಿಬಿಡುವುದು.”</verse>
			</chapter>
			<chapter number="9">
				<verse number="1">ಇಸ್ರಯೇಲ್, ಹರ್ಷಿಸದಿರು; ಇತರ ರಾಷ್ಟ್ರಗಳೊಡನೆ ಆನಂದಿಸದಿರು. ನಿನ್ನ ದೇವರನ್ನು ತೊರೆದು ವ್ಯಭಿಚಾರ ಮಾಡಿರುವೆ. ಇತರರ ಕಣಗಳಿಂದ ದೊರಕುವ ಕಾಳು ನಿನ್ನ ವ್ಯಭಿಚಾರದ ಸಂಭಾವನೆಯೆಂದು ಹಂಬಲಿಸಿರುವೆ.</verse>
				<verse number="2">ಸುಗ್ಗಿಯ ಕಣವೂ ದ್ರಾಕ್ಷಾರಸದ ತೊಟ್ಟಿಯೂ ನಿನ್ನ ಜನರಿಗೆ ಜೀವನಾಧಾರವಾಗವು. ಹೊಸದ್ರಾಕ್ಷಾರಸದ ನಿರೀಕ್ಷೆ ಅವರನ್ನು ನಿರಾಶೆಗೊಳಿಸುವುದು.</verse>
				<verse number="3">ಅವರು ಸರ್ವೇಶ್ವರಸ್ವಾಮಿಯ ನಾಡಿನಲ್ಲಿ ವಾಸಮಾಡುವುದಿಲ್ಲ. ಎಫ್ರಯಿಮರು ಈಜಿಪ್ಟಿಗೆ ಹಿಂದಿರುಗುವರು. ಅಸ್ಸೀರಿಯದಲ್ಲಿ ಅವರು ತಿನ್ನುವ ಆಹಾರ ಹೊಲಸಾಗುವುದು.</verse>
				<verse number="4">ಇನ್ನವರು ಸರ್ವೇಶ್ವರಸ್ವಾಮಿಗೆ ನೈವೇದ್ಯವಾಗಿ ದ್ರಾಕ್ಷಾರಸವನ್ನು ಸುರಿಯರು. ಅವರ ಯಜ್ಞಗಳು ಆ ಸ್ವಾಮಿಗೆ ಮೆಚ್ಚುಗೆಯಾಗುವುದಿಲ್ಲ. ಅವರ ಆಹಾರ ಹೆಣದ ಮನೆಯ ಆಹಾರದಂತಿರುವುದು. ಅದನ್ನು ತಿನ್ನುವವರೆಲ್ಲರು ಅಶುದ್ಧರಾಗುವರು. ಅದು ಹೊಟ್ಟೆತುಂಬಲು ಮಾತ್ರ ಸರಿಯೇ ಹೊರತು ದೇವಾಲಯದಲ್ಲಿ ಮಾಡುವ ಅರ್ಪಣೆಗೆ ಸಲ್ಲದು.</verse>
				<verse number="5">ಹಬ್ಬದ ದಿನಗಳಲ್ಲಿ ಅವರೇನು ಮಾಡುವರು? ಸರ್ವೇಶ್ವರಸ್ವಾಮಿಯ ಮಹೋತ್ಸವಗಳನ್ನು ಹೇಗೆ ಆಚರಿಸುವರು?</verse>
				<verse number="6">ವಿನಾಶದ ದೇಶವನ್ನು ಅವರು ಬಿಟ್ಟುಹೋಗಬಹುದು. ಆದರೆ ಈಜಿಪ್ಟ್ ಅವರಿಗೆ ಸ್ಮಶಾನವಾಗುವುದು.ಮೋಫ್ ಪಟ್ಟಣದಲ್ಲಿ ಅವರಿಗೆ ಸಮಾಧಿಯಾಗುವುದು. ಅವರ ಬೆಳ್ಳಿಯ ಒಡವೆಗಳು ಮುಳ್ಳುಪೊದೆಗಳ ಪಾಲಾಗುವುವು; ಅವರ ಗುಡಾರಗಳಲ್ಲಿ ಕಳೆಗಳು ಬೆಳೆಯುವುವು.</verse>
				<verse number="7">ಇಗೋ, ದಂಡನೆಯ ದಿನಗಳು ಸಮೀಪಿಸಿವೆ; ಮುಯ್ಯಿ ತೀರಿಸುವ ದಿನಗಳು ಬಂದಿವೆ. ಇಸ್ರಯೇಲರಿಗೆ ಇದು ತಿಳಿದಿರಲಿ. “ಪ್ರವಾದಿಯು ಹುಚ್ಚನು; ದೇವರಾತ್ಮಪ್ರೇರಿತನು ಮೂರ್ಖನು,” ಎಂದು ಹೇಳಿಕೊಳ್ಳುತ್ತೀರಿ. ಅತ್ಯಧಿಕವಾಗಿರುವ ನಿಮ್ಮ ಅಧರ್ಮ, ಮಿತಿಮೀರಿರುವ ನಿಮ್ಮ ದ್ವೇಷ ಇದಕ್ಕೆ ಕಾರಣ.</verse>
				<verse number="8">ಎಫ್ರಯಿಮನ ದೇವಜನರಿಗೆ ಪ್ರವಾದಿಯೇ ಕಾವಲುಗಾರ. ಆದರೂ ಅವನ ಹಾದಿಯಲ್ಲೆಲ್ಲ ಬೇಟೆಯ ಬಲೆ ಒಡ್ಡಲಾಗಿದೆ. ದೇವರ ಆಲಯದಲ್ಲೂ ಅವನಿಗೆ ಹಗೆತನ ಕಾದಿದೆ.</verse>
				<verse number="9">ಪೂರ್ವದಲ್ಲಿ ಗಿಬ್ಯದವರು ಭ್ರಷ್ಟರಾದಂತೆ ಎಫ್ರಯಿಮಿನವರು ಅತಿ ಭ್ರಷ್ಟರಾಗಿದ್ದಾರೆ. ದೇವರು ಅವರ ಅಪರಾಧವನ್ನು ನೆನಪಿಗೆ ತಂದುಕೊಳ್ಳುವರು. ಅವರ ಪಾಪಕ್ಕೆ ತಕ್ಕ ದಂಡನೆಯನ್ನು ವಿಧಿಸುವರು.</verse>
				<verse number="10">ಬೆಂಗಾಡಿನಲ್ಲಿ ದ್ರಾಕ್ಷೆ ಸಿಕ್ಕಿದಂತೆ ಇಸ್ರಯೇಲ್ ನನಗೆ ಸಿಕ್ಕಿತು. ಅಂಜೂರದ ಮರದ ಮೊತ್ತಮೊದಲ ಹಣ್ಣು ಕಣ್ಣಿಗೆ ಬೀಳುವಂತೆ ನಿಮ್ಮ ಪಿತೃಗಳು ನನಗೆ ಕಾಣಿಸಿಕೊಂಡರು. ಆದರೆ ಅವರು ಬಾಳ್‍ಪೆಗೋರಿಗೆ ಬಂದು ಬಾಳ್ ದೇವತೆಯ ಭಕ್ತರಾದರು. ಅವರು ನೆಚ್ಚಿಕೊಂಡ ದೇವತೆಯಂತೆ ನೀಚರಾದರು.</verse>
				<verse number="11">ಎಫ್ರಯಿಮರ ಮಹಿಮೆ ಪಕ್ಷಿಯಂತೆ ಹಾರಿಹೋಗುವುದು. ಅಲ್ಲಿ ಯಾರೂ ಮಕ್ಕಳನ್ನು ಹೆರುವುದಿಲ್ಲ; ಯಾರೂ ಗರ್ಭಿಣಿಯಾಗುವುದಿಲ್ಲ; ಯಾರೂ ಗರ್ಭ ಧರಿಸುವುದಿಲ್ಲ.</verse>
				<verse number="12">ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಅವರಾರೂ ಉಳಿಯದಂತೆ ಅವರಿಗೆ ನಿರಂತರವಾಗಿ ಪುತ್ರಶೋಕವನ್ನುಂಟುಮಾಡುವೆನು. ನಾನು ಅವರಿಗೆ ವಿಮುಖನಾಗುವೆನು. ಅವರ ಗತಿ ಹೇಳತೀರದಂತಾಗುವುದು.</verse>
				<verse number="13">ಎಫ್ರಯಿಮಿನ ಮಕ್ಕಳು ಬೇಟೆಗೆ ಗುರಿ ಆದವರಂತೆ ಕಾಣಿಸುತ್ತಾರೆ. ಎಫ್ರಯಿಮ್ ತನ್ನ ಪುತ್ರರನ್ನು ವಧ್ಯಸ್ಥಾನಕ್ಕೆ ಕರೆದೊಯ್ಯಬೇಕಾಗುವುದು.</verse>
				<verse number="14">ಸರ್ವೇಶ್ವರಾ, ಇವರಿಗೆ ಏನನ್ನು ವಿಧಿಸುವೆ? ಇವರಿಗೆ ಎಂಥ ಗತಿಯನ್ನು ಬರಮಾಡುವೆ? ಅವರ ಮಹಿಳೆಯರಿಗೆ ಗರ್ಭಪಾತವಾಗಲಿ! ಅವರ ಮೊಲೆ ಬತ್ತಿಹೋಗಲಿ!</verse>
				<verse number="15">“ಅವರ ದುಷ್ಟತನ ಗಿಲ್ಗಾಲಿನಲ್ಲೇ ಪ್ರಾರಂಭವಾಯಿತು. ಅಲ್ಲೇ ಅವರು ನನ್ನ ದ್ವೇಷಕ್ಕೆ ಗುರಿಯಾದರು. ಅವರ ಪಾಪಕೃತ್ಯಗಳ ನಿಮಿತ್ತ ನನ್ನ ಆಲಯದಿಂದ ಹೊರಗಟ್ಟುವೆನು. ಅವರನ್ನು ಇನ್ನು ಪ್ರೀತಿಸೆನು; ಅವರ ಅಧಿಕಾರಿಗಳೆಲ್ಲ ದ್ರೋಹಿಗಳೇ.</verse>
				<verse number="16">ಎಫ್ರಯಿಮಿಗೆ ಏಟು ಬಿದ್ದಿದೆ; ಅವರ ವಂಶದ ಬೇರು ಬತ್ತಿಹೋಗಿದೆ. ಅವರು ಫಲಹೀನರಾಗಿದ್ದಾರೆ. ಮಕ್ಕಳನ್ನು ಹೆತ್ತರೂ ಅವಳ ಕರುಳ ಕುಡಿಯನ್ನು ಕತ್ತರಿಸಿಹಾಕುವೆನು.”</verse>
				<verse number="17">ತಮ್ಮ ಮಾತಿಗೆ ಕಿವಿಗೊಡದ ಈ ಜನರನ್ನು ಸರ್ವೇಶ್ವರ ತಳ್ಳಿಬಿಡುವರು. ಇತರ ಜನಾಂಗಗಳ ಮಧ್ಯೆ ಅವರು ಅಲೆಮಾರಿಗಳಂತೆ ಇರುವರು.</verse>
			</chapter>
			<chapter number="10">
				<verse number="1">ಇಸ್ರಯೇಲ್ ಸೊಂಪಾಗಿ ಬೆಳೆದ ದ್ರಾಕ್ಷಾಲತೆ, ಫಲಭರಿತ ದ್ರಾಕ್ಷಾಬಳ್ಳಿ, ಅದರ ಫಲ ಹೆಚ್ಚಿದಂತೆಲ್ಲ ಬಲಿಪೀಠಗಳು ಹೆಚ್ಚಿಕೊಂಡಿವೆ. ಆ ನಾಡು ಅಭಿವೃದ್ಧಿಯಾದಂತೆಲ್ಲ, ಹೆಚ್ಚು ಸುಂದರವಾದ ವಿಗ್ರಹಸ್ತಂಭಗಳು ನಿರ್ಮಿತವಾಗಿವೆ.</verse>
				<verse number="2">ಅವರದು ವಂಚನೆಯ ಮನಸ್ಸು. ಈಗ ಅವರು ತಮ್ಮ ಪಾಪಕ್ಕೆ ತಕ್ಕ ದಂಡನೆಯನ್ನು ಅನುಭವಿಸಲೇಬೇಕು. ಸರ್ವೇಶ್ವರಸ್ವಾಮಿ ಅವರ ಯಜ್ಞವೇದಿಗಳನ್ನು ಕೆಡವುವರು. ಅವರ ಪೂಜಾಸ್ತಂಭಗಳನ್ನು ಒಡೆದುಹಾಕುವರು.</verse>
				<verse number="3">“ನಮಗೆ ರಾಜನೇ ಇಲ್ಲ. ನಾವು ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರಲ್ಲ. ನಮಗೆ ರಾಜನಿದ್ದರೂ ಅವನು ನಮಗೆ ಏನು ತಾನೇ ಮಾಡಿಯಾನು?” ಎಂದು ಆ ಜನರು ಆಡಿಕೊಳ್ಳುತ್ತಾರೆ.</verse>
				<verse number="4">ಅವರು ಹರಟೆಹೊಡೆಯುತ್ತಾರೆ; ಸುಳ್ಳಾಣೆ ಇಟ್ಟು ಸಂಧಾನಮಾಡಿಕೊಳ್ಳುತ್ತಾರೆ. ಉತ್ತಹೊಲದಲ್ಲಿ ಬೆಳೆಯುವ ವಿಷದ ಕಳೆಗಳಂತೆ ನ್ಯಾಯಸ್ಥಾನಕ್ಕೆ ಬರುವ ಅವರ ವಾದವಿವಾದಗಳು ಹೆಚ್ಚಿಕೊಳ್ಳುತ್ತವೆ.</verse>
				<verse number="5">ಬೇತಾವೆನಿನ ಬಸವನಿಗೆ ಸಮಾರ್ಯದ ನಿವಾಸಿಗಳು ದಿಗಿಲುಗೊಳ್ಳುವರು; ಅದನ್ನು ಕಾಣದುದಕ್ಕಾಗಿ ಭಕ್ತಜನರು ಎದೆಬಡಿದುಕೊಳ್ಳುವರು. ಅದರ ಮಹಿಮೆ ನಂದಿಹೋಯಿತು ಎಂದು ಪೂಜಾರಿಗಳು ಗೋಳಾಡುವರು.</verse>
				<verse number="6">ಆ ವಿಗ್ರಹವನ್ನು ಅಸ್ಸೀರಿಯದ ಜಗಳಗಂಟಿ ರಾಜನಿಗೆ ಕಾಣಿಕೆಯಾಗಿ ಕೊಡಲಾಗುವುದು. ಎಫ್ರಯಿಮಿಗೆ ಅವಮಾನವಾಗುವುದು. ಇಸ್ರಯೇಲ್ ತಾನು ಕೆತ್ತಿಸಿಕೊಂಡ ವಿಗ್ರಹಕ್ಕಾಗಿ ನಾಚಿಕೆಗೀಡಾಗುವುದು.</verse>
				<verse number="7">ಸಮಾರ್ಯದ ರಾಜನು ಪ್ರವಾಹದಲ್ಲಿ ಕೊಚ್ಚಿಕೊಂಡುಹೋಗುವ ಕಡ್ಡಿಯಂತೆ ಕಣ್ಮರೆ ಆಗುವನು.</verse>
				<verse number="8">ಇಸ್ರಯೇಲಿನ ಪಾಪಕ್ಕೆ ಆಸ್ಪದ ಆಗಿದ್ದ ಆವೆನಿನ ಪೂಜಾಸ್ಥಾನಗಳು ನಾಶವಾಗುವುವು. ಪಾಳುಬಿದ್ದ ಬಲಿಪೀಠಗಳ ಮೇಲೆ ಮುಳ್ಳುಕಳ್ಳಿಗಳು ಹುಟ್ಟಿಕೊಳ್ಳುವುವು. ಅಲ್ಲಿನ ಜನರು: ‘ಪರ್ವತವೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ ನಮ್ಮನ್ನು ನುಂಗಿಬಿಡಿ’ ಎಂದು ಕೂಗಿಕೊಳ್ಳುವರು.”</verse>
				<verse number="9">“ಇಸ್ರಯೇಲ್, ನೀನು ಗಿಬ್ಯದಲ್ಲಿದ್ದ ಕಾಲದಿಂದ ನನಗೆ ವಿರುದ್ಧ ಪಾಪಮಾಡುತ್ತಲೇ ಬಂದಿರುವೆ. ನಿನ್ನ ಜನರು ಪಾಪದಲ್ಲಿಯೇ ಮುಂದುವರಿಯುತ್ತಿದ್ದಾರೆ. ಗಿಬ್ಯದ ನಿವಾಸಿಗಳು ಯುದ್ಧಕ್ಕೆ ತುತ್ತಾಗಲಿದ್ದಾರೆ.</verse>
				<verse number="10">ಸಕಾಲದಲ್ಲಿ ನಾನು ಅವರನ್ನು ದಂಡಿಸುವೆನು; ಅವರ ಇಮ್ಮಡಿ ಅಪರಾಧಕ್ಕೆ ತಕ್ಕ ಶಾಸ್ತಿ ಆಗುವುದು; ಆಗ ಇತರ ರಾಷ್ಟ್ರಗಳು ಅವರಿಗೆ ವಿರುದ್ಧವಾಗಿ ಒಂದುಗೂಡುವುವು.</verse>
				<verse number="11">“ಎಫ್ರಯಿಮ್ ತೆನೆಹುಲ್ಲನ್ನು ತುಳಿಯುವುದರಲ್ಲಿ ಪಳಗಿರುವ ಹೋರಿಕರು. ಅದರ ಅಂದವಾದ ಹೆಗಲಮೇಲೆ ನೇಗಿಲನ್ನು ಇಟ್ಟಿರಲಿಲ್ಲ. ಜುದೇಯವು ಉಳುವಂತೆ ಮಾಡಿದೆನು. ಯಕೋಬ್ ಕುಂಟೆ ಎಳೆಯುವಂತೆ ಮಾಡಿದೆನು. ಈಗ ಎಫ್ರಯಿಮನ್ನು ನೊಗಕ್ಕೆ ಹೂಡುವೆನು.</verse>
				<verse number="12">ನಾನು ಇಂತೆಂದೆ: “ಪಾಳುಬಿದ್ದ ನೆಲವನ್ನು ಉತ್ತು ಹದಮಾಡಿರಿ; ನೀತಿಯ ಬೀಜವನ್ನು ಬಿತ್ತಿರಿ; ಪ್ರೀತಿಯ ಫಲವನ್ನು ಕೊಯ್ಯಿರಿ. ಸಮಯವು ಸನ್ನಿಹಿತವಾಗಿದೆ. ಸರ್ವೇಶ್ವರ ಆಗಮಿಸಿ ನಿಮ್ಮ ಮೇಲೆ ನೀತಿಯನ್ನು ಮಳೆಗರೆಯುವಂತೆ ಅವರಿಗೆ ಶರಣುಹೋಗಬೇಕು.</verse>
				<verse number="13">ಇದಕ್ಕೆ ಬದಲಾಗಿ ನೀನು ಅಧರ್ಮದ ಬೀಜವನ್ನು ಬಿತ್ತಿರುವೆ, ಅನ್ಯಾಯದ ಬೆಳೆಯನ್ನು ಕೊಯ್ದಿರುವೆ. ಅಸತ್ಯದ ಫಲವನ್ನು ಉಂಡಿರುವೆ. ನಿನ್ನ ಭುಜಬಲದಲ್ಲೂ ಸಮರಶೂರರಲ್ಲೂ ಭರವಸೆಯಿಟ್ಟೆ.</verse>
				<verse number="14">ಎಂತಲೇ ನಿನ್ನ ಜಾತಿಜನಾಂಗಗಳ ವಿರುದ್ಧ ಯುದ್ಧ ಘೋಷಣೆ ಮೊಳಗುವುದು. ಕಾಳಗದ ದಿನದಲ್ಲಿ ಕೋಟೆಕೊತ್ತಲಗಳು ಸೂರೆಯಾಗುವುವು. ಶಲ್ಮಾನ ರಾಜನು ಬೇತ್‍ಅರ್ಬೇಲ್ ಪಟ್ಟಣವನ್ನು ನೆಲಸಮಮಾಡಿದಂತೆ ಆಗುವುದು. ತಾಯಿ ಮಕ್ಕಳನ್ನು ಬಂಡೆಗೆ ಅಪ್ಪಳಿಸಿ ಸಾಯಿಸಿದಂತೆ ಇದೆಲ್ಲ ನಡೆಯುವುದು.</verse>
				<verse number="15">ಬೇತೇಲಿನ ಜನರೇ, ನಿಮಗೂ ಇಂಥ ದುರ್ಗತಿಯೇ ಸಂಭವಿಸಲಿರುವುದು. ಬೆಳಗಾಗುವುದರೊಳಗೆ ಇಸ್ರಯೇಲಿನ ರಾಜನು ಹತನಾಗುವನು. ಕಾರಣ, ನಿಮ್ಮ ಅಕ್ರಮವು ಘೋರವಾದುದು!”</verse>
			</chapter>
			<chapter number="11">
				<verse number="1">ಸರ್ವೇಶ್ವರ ಇಂತೆನ್ನುತ್ತಾರೆ: “ಪ್ರೀತಿಸಿದೆನು ಇಸ್ರಯೇಲನ್ನು ಅದರ ಬಾಲ್ಯಾವಸ್ಥೆಯಿಂದ; ಕರೆದೆನು ನನ್ನ ಆ ಪುತ್ರನನು ಈಜಿಪ್ಟಿನಿಂದ.</verse>
				<verse number="2">ದೂರ ಸರಿದರು ಆ ಇಸ್ರಯೇಲರು ನಾ ಕರೆದರೂ ನನ್ನ ಬಳಿಗೆ ಅರ್ಪಿಸುತ್ತಾ ಬಂದರು ಯಜ್ಞವನ್ನು ಬಾಳ್ ದೇವತೆಗಳಿಗೆ ಧೂಪಾರತಿ ಬೆಳಗುತ್ತಾ ಬಂದರು ಆ ವಿಗ್ರಹಗಳಿಗೆ.</verse>
				<verse number="3">ಎಫ್ರಯಿಮಿಗೆ ಅಂಬೆಗಾಲಿಡಲು ಕಲಿಸಿದವನು ನಾನೇ ಅದನ್ನು ಕೈಗಳಲ್ಲಿ ಎತ್ತಿಕೊಂಡು ಆಡಿಸಿದವನು ನಾನೇ ಆ ಜನರನ್ನು ಸ್ವಸ್ಥಮಾಡಿದವನೂ ನಾನೇ; ಆದರೆ ಅರಿತುಕೊಳ್ಳದೆಹೋದರು ಈ ವಿಷಯವನೇ.</verse>
				<verse number="4">ಬೆಳೆಸಿದೆನು ಅವರನ್ನು ಕರುಣೆಯ ಕಟ್ಟುಗಳಲಿ, ಪ್ರೀತಿಯ ಬಂಧನದಲಿ ಸುಧಾರಿಸಿದೆ ಅವರ ಹೆಗಲಿಗೆ ಬಿಗಿದಿದ್ದ ನೊಗವನ್ನು ಬಿಚ್ಚಿ ಊಟ ಬಡಿಸಿದೆ ಅವರಿಗೆ ನೆಲಸಮ ಬಗ್ಗಿ.</verse>
				<verse number="5">“ಅವರು ನನ್ನ ಬಳಿಗೆ ಬಾರದ ಕಾರಣ, ಇಸ್ರಯೇಲ್ ಈಜಿಪ್ಟಿಗೆ ಹಿಂದಿರುಗುವುದು, ಅಸ್ಸೀರಿಯದ ಆಳ್ವಿಕೆಗೆ ಒಳಗಾಗುವುದು.</verse>
				<verse number="6">ತಮ್ಮ ಇಚ್ಛಾನುಸಾರ ಅವರು ನಡೆದ ಕಾರಣ, ಅವರ ಪಟ್ಟಣಗಳಲ್ಲಿ ಕತ್ತಿಯ ಕಾಳಗ ನಡೆಯುವುದು. ಅವರ ಪುರದ್ವಾರದ ಕತ್ತಿಯ ಕಬ್ಬಿಣದ ಅಗುಳಿಗಳನ್ನು ಮುರಿದು ಕೋಟೆಯಲ್ಲೇ ಅವರನ್ನು ಕಡಿದುಹಾಕುವರು.</verse>
				<verse number="7">ಅವರು ನನ್ನ ಕಡೆಯಿಂದ ದೂರಹೋಗುವ ಹಠಹಿಡಿದಿದ್ದಾರೆ; ಅವರು ನೊಗದ ಭಾರವನ್ನು ತಾಳದೆ ಕೂಗಿಕೊಂಡರೂ ಅದನ್ನು ಬಿಚ್ಚುವವರು ಯಾರೂ ಇಲ್ಲ.</verse>
				<verse number="8">“ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?</verse>
				<verse number="9">ತಡೆಹಿಡಿಯುವೆನು ನನ್ನ ಉಗ್ರಕೋಪವನು ನಾಶಪಡಿಸಲಾರೆ ಮರಳಿ ಎಫ್ರಯಿಮನು. ನರಮಾನವನಲ್ಲ, ದೇವರು ನಾನು ನಿಮ್ಮಲ್ಲಿ ನೆಲೆಯಾಗಿರುವ ಸದಮಲಸ್ವಾಮಿಯು! ನನ್ನದಲ್ಲ ನಾಶಮಾಡುವ ರೋಷವು.</verse>
				<verse number="10">“ಶತ್ರುಗಳ ಕಡೆಗೆ ಸಿಂಹದಂತೆ ಗರ್ಜಿಸುವ ಸ್ವಾಮಿಯನ್ನು ಆ ಜನರು ಹಿಂಬಾಲಿಸುತ್ತಾರೆ. ಆತ ಆರ್ಭಟಿಸಲು ಅವರ ಮಕ್ಕಳು ನಡುನಡುಗುತ್ತಾ ಬರುತ್ತಾರೆ.</verse>
				<verse number="11">ಗುಬ್ಬಿಗಳಂತೆ ಈಜಿಪ್ಟಿನಿಂದಲೂ ಪಾರಿವಾಳಗಳಂತೆ ಅಸ್ಸೀರಿಯದಿಂದಲೂ ಅವರು ಬೆದರುತ್ತಾ ಓಡಿಬರುತ್ತಾರೆ. ಅವರು ತಮ್ಮ ತಮ್ಮ ಮನೆಗಳಿಗೆ ಹಿಂದಿರುಗುವಂತೆ ಮಾಡುವೆನು.</verse>
				<verse number="12">“ಎಫ್ರಯಿಮಿನ ಸುಳ್ಳುತನ, ಇಸ್ರಯೇಲಿನ ಕಪಟತನ ನನ್ನನ್ನು ಮುತ್ತಿಕೊಂಡಿವೆ. ಸತ್ಯಸ್ವರೂಪಿಯೂ ಪರಮಪಾವನರೂ ಆದ ದೇವರಿಂದ ದೂರವಾಗಿ ಜುದೇಯವು ಅಲೆಯುತ್ತಿದೆ.</verse>
			</chapter>
			<chapter number="12">
				<verse number="1">“ಎಫ್ರಯಿಮ್ ಕೇವಲ ಗಾಳಿಗೆ ಕುರಿಗಾಹಿ; ಅದು ದಿನವಿಡೀ ಗುದ್ದಾಡುತ್ತಿರುವುದು ಮೂಡಣಗಾಳಿಯನ್ನೇ. ಅದು ಮೋಸವನ್ನೂ ಹಿಂಸೆಯನ್ನೂ ನಿರಂತರವಾಗಿ ಹೆಚ್ಚಿಸುತ್ತಿದೆ. ಅಸ್ಸೀರಿಯದೊಂದಿಗೆ ಒಪ್ಪಂದಮಾಡಿಕೊಳ್ಳುತ್ತಿದೆ. ಈಜಿಪ್ಟಿಗೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತಿದೆ.”</verse>
				<verse number="2">ಸರ್ವೇಶ್ವರ ಜುದೇಯದ ಮೇಲೆ ಆಪಾದನೆ ಹೊರಿಸಿದ್ದಾರೆ. ಯಕೋಬನನ್ನು ಅದರ ನಡತೆಗೆ ತಕ್ಕಂತೆ ದಂಡಿಸುತ್ತಾರೆ. ಅದರ ಕೃತ್ಯಗಳಿಗನುಸಾರವಾಗಿ ಪ್ರತೀಕಾರ ಮಾಡುತ್ತಾರೆ.</verse>
				<verse number="3">ಯಕೋಬನು ಅಣ್ಣನ ಜೊತೆ ತಾಯಿಯ ಗರ್ಭದಲ್ಲಿರುವಾಗಲೇ ಅವನ ಹಿಮ್ಮಡಿಯನ್ನು ಹಿಡಿದು ವಂಚಿಸಿದನು. ಪ್ರಾಯಕ್ಕೆ ಬಂದಮೇಲೆ ದೇವರೊಡನೆ ಹೋರಾಡಿದನು.</verse>
				<verse number="4">ಹೌದು, ಯಕೋಬನು ದೇವದೂತನ ಸಂಗಡ ಹೋರಾಡಿ ಗೆದ್ದನು. ಅಳುತ್ತಾ ಆತನ ಅನುಗ್ರಹಕ್ಕಾಗಿ ಯಾಚಿಸಿದನು. ಆತನು ಬೇತೇಲಿನಲ್ಲಿ ದೇವರನ್ನು ಕಂಡನು. ದೇವರು ಅಲ್ಲಿ ಆತನೊಂದಿಗೆ ಮಾತನಾಡಿದರು.</verse>
				<verse number="5">ಅವರೇ ಸರ್ವಶಕ್ತನಾದ ದೇವರು; ಸರ್ವೇಶ್ವರ ಎಂಬುದೇ ಅವರನ್ನು ಸ್ಮರಿಸುವ ನಾಮಧೇಯ.</verse>
				<verse number="6">ಆದುದರಿಂದ ಇಸ್ರಯೇಲ್, ನೀನು ದೇವರ ಕಡೆ ತಿರುಗಿಕೋ, ನೀತಿ ಪ್ರೀತಿಗಳಿಗೆ ಅನುಗುಣವಾಗಿ ನಡೆ. ನಿರಂತರವಾಗಿ ದೇವರನ್ನು ನಿರೀಕ್ಷಿಸಿಕೊಂಡಿರು.</verse>
				<verse number="7">ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲ್ ಮೋಸದ ತಕ್ಕಡಿ ಹಿಡಿದು ವ್ಯಾಪಾರಮಾಡುವ ಕಾನಾನ್ಯರಂತೆ ಇದೆ. ಇತರರಿಂದ ಕಸಿದುಕೊಳ್ಳಬೇಕೆಂಬುದೇ ಅದರ ದುರಾಸೆ.”</verse>
				<verse number="8">ಎಫ್ರಯಿಮ್ ಹೇಳಿಕೊಳ್ಳುವುದೇನೆಂದರೆ: “ನಾನು ಐಶ್ವರ್ಯವಂತನಾಗಿಬಿಟ್ಟೆ, ನನಗಾಗಿ ಆಸ್ತಿಪಾಸ್ತಿಯನ್ನು ಗಳಿಸಿಕೊಂಡಿದ್ದೇನೆ. ನನ್ನ ಗಳಿಕೆಯಲ್ಲಿ ಪಾಪವೆಂಬ ದೋಷವೇನೂ ಇಲ್ಲ.”</verse>
				<verse number="9">ಆದರೆ ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಿನಿಂದಲೂ ನಿನ್ನ ಸರ್ವೇಶ್ವರನಾದ ದೇವರಾದ ನಾನು, ಯಾತ್ರಾದಿನಗಳಲ್ಲಿ ನೀನು ವನವಾಸ ಮಾಡಿದಂತೆ ನಿಮ್ಮನ್ನು ಪುನಃ ಗುಡಾರದವಾಸಕ್ಕೆ ಗುರಿಪಡಿಸುವೆನು.</verse>
				<verse number="10">“ಪ್ರವಾದಿಗಳೊಂದಿಗೆ ಮಾತನಾಡಿದ್ದೇನೆ. ಅವರಿಗೆ ಹಲವಾರು ದರ್ಶನಗಳನ್ನು ದಯಪಾಲಿಸಿದ್ದೇನೆ. ಅವರ ಮುಖಾಂತರ ಸಾಮತಿಗಳನ್ನು ಹೇಳಿ ಜನರಿಗೆ ಮುನ್ನೆಚ್ಚರಿಕೆ ನೀಡಿದ್ದೇನೆ.</verse>
				<verse number="11">ಆದರೂ ಗಿಲ್ಯಾದಿನಲ್ಲಿ ಅಧರ್ಮ ನೆಲೆಗೊಂಡಿದೆ. ಅದಕ್ಕೆ ದುರ್ಗತಿ ಕಾದಿದೆ. ಗಿಲ್ಗಾಲಿನಲ್ಲಿ ಬಸವನಿಗೆ ಯಜ್ಞಗಳನ್ನು ಅರ್ಪಿಸಲಾಗುತ್ತಿದೆ. ಅಲ್ಲಿನ ಯಜ್ಞವೇದಿಗಳು ಪುಡಿಪುಡಿಯಾಗುವುವು; ಉಳುವ ನೇಗಿಲಿಗೆ ಸಿಕ್ಕುವ ಕಲ್ಲುಕುಪ್ಪೆಗಳಾಗುವುವು.”</verse>
				<verse number="12">ಯಕೋಬನು ಮೆಸಪಟೋಮಿಯಕ್ಕೆ ಓಡಿಹೋಗಬೇಕಾಯಿತು. ಅಲ್ಲಿ ಮದುವೆಗೋಸ್ಕರ ಜೀತಮಾಡಿದನು; ವಧುವಿಗೋಸ್ಕರ ಕುರಿ ಕಾಯ್ದನು.</verse>
				<verse number="13">ದೇವರು ಪ್ರವಾದಿಯನ್ನು ಕಳುಹಿಸಿ, ಇಸ್ರಯೇಲನ್ನು ಈಜಿಪ್ಟಿನಿಂದ ಬಿಡುಗಡೆ ಮಾಡಿದರು. ಪ್ರವಾದಿಯ ಮುಖಾಂತರ ಇಸ್ರಯೇಲಿಗೆ ರಕ್ಷಣೆ ದೊರಕಿತು.</verse>
				<verse number="14">ಎಫ್ರಯಿಮ್ ದೇವರನ್ನು ಉಗ್ರವಾಗಿ ರೇಗಿಸಿದೆ; ರಕ್ತಾಪರಾಧವನ್ನು ಅದರ ಮೇಲೆ ಹೊರಿಸಲಾಗುವುದು. ಅದು ಮಾಡಿದ ಅವಮಾನಕ್ಕೆ ಪ್ರತಿಯಾಗಿ ದೇವರು ಅದನ್ನು ಅವಮಾನಕ್ಕೆ ಗುರಿಪಡಿಸುವರು.</verse>
			</chapter>
			<chapter number="13">
				<verse number="1">ಪೂರ್ವದಲ್ಲಿ ಎಫ್ರಯಿಮ್ ಮಾತನಾಡಿದಾಗ ಎಲ್ಲರೂ ನಡುಗುತ್ತಿದ್ದರು. ಅದು ಇಸ್ರಯೇಲಿನಲ್ಲಿ ಅಷ್ಟು ಉನ್ನತ ಸ್ಥಿತಿಗೆ ಏರಿತ್ತು. ಆದರೆ ಅದು ಬಾಳ್ ದೇವತೆಗೆ ಆರಾಧನೆ ಸಲ್ಲಿಸಿದ್ದರಿಂದ ಪಾಪಕಟ್ಟಿಕೊಂಡು ಪತನವಾಯಿತು.</verse>
				<verse number="2">ಈಗ ಎಫ್ರಯಿಮರ ಪಾಪ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅವರು ಬೆಳ್ಳಿಬಂಗಾರವನ್ನು ಕರಗಿಸಿ ಇಷ್ಟಬಂದಂತೆ ಬೊಂಬೆಗಳನ್ನು ಮಾಡಿಕೊಂಡಿದ್ದಾರೆ. ಅವೆಲ್ಲವು ಶಿಲ್ಪಿಗಳ ಕೈಕೆಲಸವೇ ಹೊರತು ಮತ್ತೇನು ಅಲ್ಲ. ಇಂಥ ವಿಗ್ರಹಗಳನ್ನು ಪೂಜೆಗಾಗಿ ಪ್ರತಿಷ್ಠಾಪನೆಮಾಡುತ್ತಾರೆ. ಬುದ್ಧಿಜೀವಿಗಳಾದ ಇವರು ಬಸವನಿಗೆ ಮುದ್ದಿಡುತ್ತಾರೆ.</verse>
				<verse number="3">ಇವರು ಪ್ರಾತಃಕಾಲದ ಮೋಡದಂತೆ ಮಾಯವಾಗುತ್ತಾರೆ. ಇಬ್ಬನಿಯಂತೆ ಕರಗಿಹೋಗುತ್ತಾರೆ. ಬಿರುಗಾಳಿಗೆ ಸಿಕ್ಕಿದ ಹೊಟ್ಟಿನಂತೆ ತೂರಿಹೋಗುತ್ತಾರೆ; ಗವಾಕ್ಷಿಯ ಹೊಗೆಯಂತೆ ಗಾಳಿಯಲ್ಲಿ ತೇಲಿಹೋಗುತ್ತಾರೆ.</verse>
				<verse number="4">ಸರ್ವೇಶ್ವರ ಇಂತೆನ್ನುತ್ತಾರೆ: “ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಲಿಂದ ನಾನೇ ನಿನ್ನ ಸರ್ವೇಶ್ವರನಾದ ದೇವರು. ನಾನಲ್ಲದೆ ಬೇರೆ ದೇವರುಗಳು ನಿನಗಿಲ್ಲ. ನಾನಲ್ಲದೆ ನಿನಗೆ ಬೇರೆ ಉದ್ಧಾರಕರಿಲ್ಲ.</verse>
				<verse number="5">ಬೆಂಗಾಡಿನಲ್ಲಿ, ಘೋರ ಮರುಭೂಮಿಯಲ್ಲಿ ನಿನ್ನನ್ನು ಕಾಪಾಡಿದವನು ನಾನೇ.</verse>
				<verse number="6">ಅನ್ನ ಆಹಾರ ಯಥೇಚ್ಛವಾಗಿ ಸಿಕ್ಕಿದಾಗ ನಿನ್ನವರು ತಿಂದು ತೃಪ್ತರಾದರು; ಅಹಾಂಭಾವ ಅವರ ನೆತ್ತಿಗೇರಿತು. ಆಗ ಅವರು ನನ್ನನ್ನು ಮರೆತುಬಿಟ್ಟರು.</verse>
				<verse number="7">ಆದುದರಿಂದ ನಾನು ಅವರಿಗೆ ಸಿಂಹದಂತಿರುವೆನು. ದಾರಿಯ ಮಗ್ಗುಲಲ್ಲಿ ಹೊಂಚುಹಾಕುವ ಚಿರತೆಯಂತಿರುವೆನು.</verse>
				<verse number="8">ಮರಿಗಳನ್ನು ಕಳೆದುಕೊಂಡ ಕರಡಿಯಂತೆ ಅವರ ಮೇಲೆ ಬೀಳುವೆನು. ಅವರ ಎದೆಯನ್ನು ಬಗಿದುಹಾಕುವೆನು. ಮೃಗರಾಜರಂತೆ ಅವರನ್ನು ನುಂಗಿಬಿಡುವೆನು. ಕಾಡುಮೃಗದಂತೆ ಅವರನ್ನು ಸೀಳಿಬಿಡುವೆನು.</verse>
				<verse number="9">“ಇಸ್ರಯೇಲ್, ನಿನ್ನನ್ನು ನಾಶಮಾಡುವೆನು, ನಿನಗೆ ನೆರವಾಗಬಲ್ಲವರು ಯಾರು?</verse>
				<verse number="10">‘ನನಗೆ ರಾಜನು ಬೇಕು, ರಾಜಾಧಿಕಾರಿಗಳು ಬೇಕು’ ಎಂದು ಹೇಳಿಕೊಂಡಿದ್ದಿಯಲ್ಲಾ; ನಿನ್ನನ್ನು ರಕ್ಷಿಸಬಲ್ಲ ರಾಜನೆಲ್ಲಿ? ನಿನ್ನನ್ನು ಕಾಪಾಡಬಲ್ಲ ನಗರಪಾಲಕರೆಲ್ಲಿ?</verse>
				<verse number="11">ಇಷ್ಟವಿಲ್ಲದೆ ಸಿಟ್ಟಿನಿಂದ ನಿನಗೆ ರಾಜನನ್ನು ಕೊಟ್ಟೆ. ಈಗ ಕಡುಕೋಪದಿಂದ ಆ ರಾಜರನ್ನು ತೆಗೆದುಬಿಡುತ್ತೇನೆ.</verse>
				<verse number="12">“ಎಫ್ರಯಿಮಿನ ಅಕ್ರಮಗಳೆಲ್ಲ ದಾಖಲಾಗಿವೆ. ಅದರ ಪಾಪಕೃತ್ಯಗಳನ್ನೆಲ್ಲ ಒಂದೂ ಬಿಡದೆ ಲೆಕ್ಕಹಾಕಿಡಲಾಗಿದೆ.</verse>
				<verse number="13">ಎಫ್ರಯಿಮಿಗೆ ಪ್ರಸವವೇದನೆ ಬಂದಿದೆ. ಅಷ್ಟೇ ಅಲ್ಲ. ಅದೊಂದು ಮಂಕು ಮಗುವಿನಂತಿದೆ. ಹುಟ್ಟಿ, ಹೊರಗೆ ಬರಬಹುದಾದರೂ, ಅದು ಬಾರದೆ ಇದೆ.</verse>
				<verse number="14">ಅದನ್ನು ಪಾತಾಳದ ಹಿಡಿತದಿಂದ ನಾನು ಬಿಡಿಸಲಾರೆ. ಮರಣದ ಬಾಧೆಯಿಂದ ಅವರನ್ನು ರಕ್ಷಿಸಲಾರೆ. ‘ಮರಣವೇ, ನಿನ್ನ ಮಾರಕ ವ್ಯಾಧಿಗಳಿಂದ ಅವರನ್ನು ಬಾಧಿಸು. ಪಾತಾಳವೇ, ಅವರನ್ನು ಕಬಳಿಸಿ ನಾಶಗೊಳಿಸು. ಕರುಣೆ ನನ್ನಿಂದ ದೂರವಾಗಿದೆ.</verse>
				<verse number="15">ಎಫ್ರಯಿಮ್ ಕಳೆಗಳ ನಡುವೆ ಸೊಂಪಾಗಿ ಬೆಳೆದ ಜೊಂಡಿನಂತಿದೆ. ಆದರೆ ಸರ್ವೇಶ್ವರ ಮರುಭೂಮಿಯಿಂದ ಮೂಡಣಗಾಳಿ ಬೀಸುವಂತೆ ಮಾಡುವರು. ಅದರ ಬುಗ್ಗೆ ಬತ್ತಿಹೋಗುವುದು. ಅದರ ಒರತೆ ಒಣಗಿಹೋಗುವುದು. ಅದರ ಸಿರಿಸಂಪತ್ತಿನ ನಿಧಿಯನ್ನು ಶತ್ರುಗಳು ಸೂರೆಮಾಡುವರು.</verse>
				<verse number="16">ಸಮಾರ್ಯವು ತನ್ನ ದೇವರಿಗೆ ವಿರುದ್ಧ ದಂಗೆ ಎದ್ದಿದೆ. ಅದಕ್ಕೆ ತಕ್ಕ ಪ್ರತಿಫಲವನ್ನು ಅನುಭವಿಸಲೇಬೇಕು. ಅದರ ಜನರು ಖಡ್ಗದಿಂದ ಹತರಾಗುವರು; ಶತ್ರುಗಳು ಅಲ್ಲಿನ ಮಕ್ಕಳನ್ನು ಬಂಡೆಗೆ ಅಪ್ಪಳಿಸುವರು. ಗರ್ಭಿಣಿಯರ ಹೊಟ್ಟೆಯನ್ನು ಸೀಳಿಹಾಕುವರು.”</verse>
			</chapter>
			<chapter number="14">
				<verse number="1">ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ.</verse>
				<verse number="2">ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು.</verse>
				<verse number="3">ಅಸ್ಸೀರಿಯದಿಂದ ನಮಗೆ ರಕ್ಷಣೆ ದೊರಕದು. ನಾವು ಕಾಳಗದ ಕುದುರೆಗಳ ಮೇಲೆ ಇನ್ನೆಂದೂ ಸವಾರಿಮಾಡೆವು. ನಮ್ಮ ಕೈಗಳು ನಿರ್ಮಿಸಿರುವ ವಿಗ್ರಹಗಳನ್ನು ವೀಕ್ಷಿಸಿ, ‘ನೀವೇ ನಮ್ಮ ದೇವರು’ ಎಂದು ಜಪಿಸೆವು. ಓ ದೇವಾ, ದಿಕ್ಕಿಲ್ಲದವರಿಗೆ ಕರುಣೆ ತೋರಿಸುವವನು ನೀನೇ,” ಎಂದು ಹೇಳು.</verse>
				<verse number="4">ಸರ್ವೇಶ್ವರ ಇಂತೆನ್ನುತ್ತಾರೆ: ಪರಿಹರಿಸುವೆನು ಜನರ ಭ್ರಷ್ಟತನವನು ಪ್ರೀತಿಸುವೆನು ಮನಃಪೂರ್ವಕವಾಗಿ ಅವರನು ತ್ಯಜಿಸಿಬಿಡುವೆನು ಅವರ ಮೇಲಿದ್ದ ಕೋಪವನು.</verse>
				<verse number="5">ಇರುವೆನು ಇಸ್ರಯೇಲಿಗೆ ಇಬ್ಬನಿಯಂತೆ ಅರಳುವುದು ಆ ನಾಡು ತಾವರೆಯಂತೆ ಬೇರೂರುವುದು ಲೆಬನೋನಿನ ದೇವದಾರು ವೃಕ್ಷದಂತೆ.</verse>
				<verse number="6">ಹರಡಿಕೊಳ್ಳುವುದದು ಮರದ ರೆಂಬೆಗಳಂತೆ ಕಂಗೊಳಿಸುವುದು ಚೆಲುವಾದ ಓಲಿವ ಮರದಂತೆ ಅದರ ಪರಿಮಳ ಮನೋಹರ ಲೆಬನೋನಿನ ಲತೆಗಳಂತೆ.</verse>
				<verse number="7">ಮರಳಿ ಆಶ್ರಯಿಸುವರು ನನ್ನ ನೆರಳನ್ನು ಆ ಜನತೆ ಅಭಿವೃದ್ಧಿಯಾಗುವರು ಉದ್ಯಾನವನದಂತೆ ಫಲಪ್ರದವಾಗುವರು ಆ ಜನರು ದ್ರಾಕ್ಷಾಲತೆಯಂತೆ ಸುಪ್ರಸಿದ್ಧ ಅವರ ಕೀರ್ತಿ ಲೆಬನೋನಿನ ದ್ರಾಕ್ಷಾರಸದಂತೆ.</verse>
				<verse number="8">ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ\. ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.”</verse>
				<verse number="9">ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.</verse>
			</chapter>
		</book>
		<book number="29">
			<chapter number="1">
				<verse number="1">ಪೆತುವೇಲನ ಮಗನಾದ ಯೊವೇಲನಿಗೆ ಸರ್ವೇಶ್ವರಸ್ವಾಮಿಯಿಂದ ಬಂದ ವಾಣಿ:</verse>
				<verse number="2">ವೃದ್ಧರೇ ಕೇಳಿ: ನಾಡಿನ ನಿವಾಸಿಗಳೇ ಕಿವಿಗೊಡಿ. ನಿಮ್ಮ ಕಾಲದಲ್ಲಾಗಲೀ ನಿಮ್ಮ ಪೂರ್ವಿಕರ ಕಾಲದಲ್ಲಾಗಲೀ, ಇಂಥ ದುರ್ಘಟನೆ ಸಂಭವಿಸಿದ್ದುಂಟೇ?</verse>
				<verse number="3">ಇದನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ; ಅವರು ತಮ್ಮ ಮಕ್ಕಳಿಗೆ ತಿಳಿಸಲಿ; ಅವರ ಮಕ್ಕಳು ಮುಂದಿನ ತಲೆಮಾರಿಗೆ ತಿಳಿಸಲಿ.</verse>
				<verse number="4">ಚೂರಿಮಿಡತೆ ತಿಂದು ಉಳಿದಿದ್ದ ಬೆಳೆಯನ್ನು ಗುಂಪುಮಿಡತೆ ತಿಂದುಬಿಟ್ಟಿತು. ಗುಂಪುಮಿಡತೆ ತಿಂದುಬಿಟ್ಟಿದ್ದನ್ನು ಕುದುರೆಮಿಡತೆ ತಿಂದುಬಿಟ್ಟಿತು; ಕುದುರೆಮಿಡತೆ ಬಿಟ್ಟದ್ದನ್ನು ಕಂಬಳಿಮಿಡತೆ ತಿಂದುಬಿಟ್ಟಿತು.</verse>
				<verse number="5">ಅಮಲೇರಿದವರೇ, ಎಚ್ಚರಗೊಳ್ಳಿ; ಅತ್ತು ಪ್ರಲಾಪಿಸಿರಿ; ಕುಡುಕರೇ, ರೋದಿಸಿರಿ. ದ್ರಾಕ್ಷಾಬಳ್ಳಿ ನಾಶವಾಗಿದೆ; ಇನ್ನು ದ್ರಾಕ್ಷಾರಸ ದೊರಕದು.</verse>
				<verse number="6">ಶತ್ರುರಾಷ್ಟ್ರ ನನ್ನ ನಾಡನ್ನು ಆಕ್ರಮಿಸಿದೆ. ಆ ರಾಷ್ಟ್ರ ಪ್ರಬಲವಾದುದು; ಅದರ ಸೈನ್ಯ ಅಸಂಖ್ಯಾತವಾದುದು; ಅದರ ಹಲ್ಲುಗಳು ಸಿಂಹದ ಹಲ್ಲುಗಳು; ಅದರ ಕೋರೆಗಳು ಮೃಗರಾಜನ ಕೋರೆಗಳು.</verse>
				<verse number="7">ಅದು ನನ್ನ ದ್ರಾಕ್ಷಾತೋಟವನ್ನು ಹಾಳುಮಾಡಿದೆ; ನನ್ನ ಅಂಜೂರದ ಗಿಡವನ್ನು ಸೀಳಿಹಾಕಿದೆ; ಅದರ ತೊಗಟೆಗಳನ್ನು ಸುಲಿದು ಬಿಸಾಡಿಬಿಟ್ಟಿದೆ; ಅದರ ರೆಂಬೆಗಳು ಬಿಳಿಚಿಕೊಂಡಿವೆ.</verse>
				<verse number="8">ಮದುವೆಯಾಗಲಿದ್ದ ಯುವಕನನ್ನು ಕಳೆದುಕೊಂಡದ್ದಕ್ಕಾಗಿ ಗೋಣಿತಟ್ಟನ್ನು ಉಟ್ಟು ಗೋಳಾಡುವ ಯುವತಿಯಂತೆ ರೋದಿಸಿರಿ.</verse>
				<verse number="9">ಸರ್ವೇಶ್ವರಸ್ವಾಮಿಯ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ. ಆ ಸ್ವಾಮಿಯ ಪರಿಚಾರಕರಾದ ಯಾಜಕರು ದುಃಖತಪ್ತರಾಗಿದ್ದಾರೆ.</verse>
				<verse number="10">ಹೊಲಗದ್ದೆಗಳು ಹಾಳಾಗಿವೆ; ಧರೆ ದುಃಖಿಸುತ್ತಿದೆ; ಬಿತ್ತಿದ ದವಸಧಾನ್ಯ ಮಣ್ಣುಪಾಲಾಗಿದೆ; ದ್ರಾಕ್ಷಿಹಣ್ಣು ಒಣಗಿಹೋಗಿದೆ; ಎಣ್ಣೆ ಮರಗಳು ಬಾಡಿಹೋಗಿವೆ.</verse>
				<verse number="11">ರೈತರೇ, ರೋದಿಸಿರಿ; ತೋಟಗಾರರೇ, ಪರಿತಪಿಸಿರಿ; ಗೋದಿಯೂ ಜವೆಗೋದಿಯೂ ಹಾಳಾಗಿವೆ; ಹೊಲದ ಬೆಳೆ ನಾಶವಾಗಿದೆ.</verse>
				<verse number="12">ದ್ರಾಕ್ಷಾಲತೆ ಒಣಗಿದೆ; ಅಂಜೂರದ ಗಿಡ ಬಾಡಿಹೋಗಿದೆ; ದಾಳಿಂಬೆ, ಖರ್ಜೂರ, ಸೇಬು ಮುಂತಾದ ಫಲವೃಕ್ಷಗಳು ಒಣಗಿ ಬೆಂಡಾಗಿವೆ. ನರಮಾನವರು ಸೊರಗಿ ಸಂತೋಷವಿಲ್ಲದೆ ಸಪ್ಪೆಯಾಗಿದ್ದಾರೆ.</verse>
				<verse number="13">ಯಾಜಕರೇ, ಗೋಣಿತಟ್ಟನ್ನುಟ್ಟು ರೋದಿಸಿರಿ; ಬಲಿಪೀಠದ ಪರಿಚಾರಕರೇ, ಪ್ರಲಾಪಿಸಿರಿ; ದೇವರ ದಾಸರೇ, ಬನ್ನಿ; ಗೋಣಿತಟ್ಟನ್ನುಟ್ಟು ಜಾಗರಣೆ ಮಾಡಿರಿ. ದೇವರ ಆಲಯದಲ್ಲಿ ಧಾನ್ಯಪಾನ ನೈವೇದ್ಯಗಳು ನಿಂತುಹೋಗಿವೆ.</verse>
				<verse number="14">ಉಪವಾಸ ವ್ರತವನ್ನು ಕೈಗೊಂಡು ಮಹಾಸಭೆಯನ್ನು ಕರೆಯಿರಿ; ಹಿರಿಯರನ್ನೂ ನಾಡಿನ ಜನಸಾಮಾನ್ಯರನ್ನೂ ಸೇರಿಸಿರಿ; ದೇವರಾದ ಸರ್ವೇಶ್ವರಸ್ವಾಮಿಯ ಆಲಯಕ್ಕೆ ಬರಮಾಡಿರಿ; ಆ ಸ್ವಾಮಿಗೆ ಪ್ರಾರ್ಥನೆಮಾಡಿರಿ.</verse>
				<verse number="15">ಸರ್ವೇಶ್ವರಸ್ವಾಮಿಯ ದಿನ ಸಮೀಪಿಸಿದೆ. ಆ ದಿನ ಸರ್ವಶಕ್ತನಿಂದ ವಿನಾಶವನ್ನು ತರಲಿದೆ; ಎಂಥಾ ಭಯಂಕರ ದಿನವದು!</verse>
				<verse number="16">ದವಸಧಾನ್ಯಗಳ ವಿನಾಶವನ್ನು ಕಣ್ಣಾರೆ ಕಾಣುತ್ತಿದ್ದೇವಲ್ಲವೆ? ದೇವಾಲಯದ ಹರ್ಷ ಉತ್ಸವಗಳು ನಿಂತುಹೋಗಿವೆ.</verse>
				<verse number="17">ಬೀಜಗಳು ಹೆಂಟೆಗಳ ಅಡಿಯಲ್ಲೇ ಒಣಗುತ್ತಿವೆ; ಉಗ್ರಾಣಗಳು ಬರಿದಾಗಿವೆ; ದವಸಧಾನ್ಯದ ಕೊರತೆಯಿಂದ ಕಣಜಗಳು ಕುಸಿದುಬಿದ್ದಿವೆ.</verse>
				<verse number="18">ಪಶುಪ್ರಾಣಿಗಳು ನರಳುತ್ತಿವೆ; ದನಕರುಗಳು ಮೇವಿಲ್ಲದೆ ಕಂಗಾಲಾಗಿವೆ; ಕುರಿಮಂದೆಗಳು ಕೂಡ ಕಂಗೆಟ್ಟಿವೆ.</verse>
				<verse number="19">ಸರ್ವೇಶ್ವರಾ, ನಿನಗೆ ಮೊರೆಯಿಡುತ್ತೇನೆ. ಹುಲ್ಲುಗಾವಲನ್ನು ಕಾಳ್ಗಿಚ್ಚು ದಹಿಸಿಬಿಟ್ಟಿದೆ; ವನವೃಕ್ಷಗಳೆಲ್ಲ ಬೆಂಕಿಪಾಲಾಗಿವೆ.</verse>
				<verse number="20">ಕಾಡುಮೃಗಗಳು ನಿನ್ನ ಕಡೆಗೆ ತಲೆಯೆತ್ತಿವೆ; ಹಳ್ಳಕೊಳ್ಳಗಳು ಬತ್ತಿಹೋಗಿವೆ; ಹುಲ್ಲುಗಾವಲನ್ನು ಕಾಳ್ಗಿಚ್ಚು ದಹಿಸಿಬಿಟ್ಟಿದೆ.</verse>
			</chapter>
			<chapter number="2">
				<verse number="1">ಸಿಯೋನಿನಲ್ಲಿ ಕೊಂಬೂದಿರಿ; ನನ್ನ ಪರಿಶುದ್ಧಪರ್ವತದಲ್ಲಿ ಎಚ್ಚರಿಕೆಯ ವಾಣಿ ಮೊಳಗಲಿ; ಸಮಸ್ತ ದೇಶನಿವಾಸಿಗಳು ಹೆದರಿ ನಡುಗಲಿ; ಸರ್ವೇಶ್ವರಸ್ವಾಮಿಯ ದಿನ ಬರಲಿದೆ. ಸನ್ನಿಹಿತವಾಗಿದೆ.</verse>
				<verse number="2">ಅದು ಕಾರಿರುಳಿನ ಕರಾಳ ದಿನ, ಕಾರ್ಮುಗಿಲ ಕಾರ್ಗತ್ತಲ ದಿನ. ಮುಂಬೆಳಕು ಗುಡ್ಡದಿಂದ ಗುಡ್ಡಕ್ಕೆ ಹರಡುವಂತೆ ಪ್ರಬಲವಾದ ದೊಡ್ಡಸೈನ್ಯವೊಂದು ಬರುತ್ತಿದೆ; ಇಂಥ ಸೈನ್ಯ ಹಿಂದೆಂದೂ ಬಂದಿಲ್ಲ, ತಲತಲಾಂತರಕ್ಕೂ ಬರುವಂತಿಲ್ಲ.</verse>
				<verse number="3">ಅದರ ಮುಂದೆ ಕಬಳಿಸುವ ಬೆಂಕಿ; ಅದರ ಹಿಂದೆ ಧಗಧಗಿಸುವ ಜ್ವಾಲೆ. ಅದು ಬರುವ ಮುನ್ನ ನಾಡು ಏದೆನ್ ಉದ್ಯಾನವನ; ಅದು ದಾಟಿದ ನಂತರ ಸುಡುಗಾಡು. ಅದರ ಆಪತ್ತಿನಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.</verse>
				<verse number="4">ಅವು ಕುದುರೆಗಳಂತೆ ಕಾಣಿಸಿಕೊಳ್ಳುತ್ತವೆ; ಸಮರದ ಸವಾರರಂತೆ ಓಡಾಡುತ್ತವೆ.</verse>
				<verse number="5">ಬೆಟ್ಟಗಳ ತುತ್ತತುದಿಯಲ್ಲಿ ಹಾರಾಡುತ್ತವೆ; ರಥಗಳಂತೆ ಚೀತ್ಕಾರಮಾಡುತ್ತವೆ; ಕೂಳೆಸುಡುವ ಬೆಂಕಿಯಂತೆ ಚಟಪಟ ಮಾಡುತ್ತವೆ; ಸಮರಕ್ಕೆ ಸಿದ್ಧವಾದ ಶೂರರ ಸೈನ್ಯದಂತಿವೆ.</verse>
				<verse number="6">ಅವುಗಳ ನೋಟ, ರಾಷ್ಟ್ರಗಳಿಗೆ ಪ್ರಾಣಸಂಕಟ; ಎಲ್ಲರ ಮುಖಗಳಿಗೆ ಮಂಕಾಟ.</verse>
				<verse number="7">ಅವು ಶೂರರಂತೆ ಹೋರಾಡುತ್ತವೆ, ಯೋಧರಂತೆ ಗೋಡೆಗಳನ್ನೇರುತ್ತವೆ, ಸಾಲುಸಾಲಾಗಿ ನಡೆದು, ಕ್ರಮತಪ್ಪದೆ ಸಾಗುತ್ತವೆ.</verse>
				<verse number="8">ನೂಕುನುಗ್ಗಲಿಲ್ಲದೆ, ಸಾಲುಸಾಲಾಗಿ ನಡೆಯುತ್ತವೆ, ಸಾಲುಗಳನ್ನು ಒಡೆಯದೆ ಆಯುಧಗಳ ನಡುವೆ ನುಗ್ಗುತ್ತವೆ.</verse>
				<verse number="9">ಪಟ್ಟಣಗಳ ಮೇಲೆ ಹಾರಾಡುತ್ತವೆ, ಗೋಡೆಗಳ ಮೇಲೆ ಓಡಾಡುತ್ತವೆ, ಮನೆಗಳನ್ನು ಹತ್ತಿ, ಕಳ್ಳರಂತೆ ಕಿಟಕಿಗಳಲ್ಲಿ ನುಗ್ಗುತ್ತವೆ.</verse>
				<verse number="10">ಅವುಗಳ ಮುಂದೆ ಭೂಮಂಡಲ ಕಂಪಿಸುತ್ತದೆ, ಆಕಾಶಮಂಡಲ ನಡುಗುತ್ತದೆ. ಸೂರ್ಯಚಂದ್ರಗಳು ಮಂಕಾಗುತ್ತವೆ, ನಕ್ಷತ್ರಗಳು ಕಾಂತಿಗುಂದುತ್ತವೆ.</verse>
				<verse number="11">ಸರ್ವೇಶ್ವರ ಗರ್ಜಿಸಿ ತಮ್ಮ ಸೈನ್ಯಕ್ಕೆ ಆಜ್ಞಾಪಿಸುತ್ತಾರೆ. ಅವರ ಸೈನ್ಯ ದೊಡ್ಡದು. ಅವರ ಆಜ್ಞೆಯನ್ನು ಪಾಲಿಸುವವನು ಬಲಾಢ್ಯನು. ಸರ್ವೇಶ್ವರಸ್ವಾಮಿಯ ದಿನ ಮಹತ್ತರ; ಅತಿ ಭಯಂಕರ; ಅದರೆದುರಿಗೆ ನಿಲ್ಲಲು ಯಾರಿಗಿದೆ ಧೈರ್ಯ?</verse>
				<verse number="12">ಸರ್ವೇಶ್ವರ ಇಂತೆನ್ನುತ್ತಾರೆ: “ಈಗಲಾದರೂ ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗಿಕೊಳ್ಳಿ. ಉಪವಾಸ ಕೈಗೊಂಡು, ಅತ್ತು ಗೋಳಾಡಿ.”</verse>
				<verse number="13">ನಿಮ್ಮ ಉಡುಪುಗಳನ್ನು ಅಲ್ಲ, ಹೃದಯಗಳನ್ನು ಸೀಳಿರಿ: ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಕಡೆಗೆ ತಿರುಗಿಕೊಳ್ಳಿ; ಅವರು ದಯಾವಂತರು, ಕರುಣಾಮೂರ್ತಿ, ಸಹನಶೀಲ, ಪ್ರೀತಿಮಯ, ವಿಧಿಸಬೇಕಾಗಿದ್ದ ದಂಡನೆಗಾಗಿ ಮನನೊಂದುಕೊಳ್ಳುವಂಥವರು.</verse>
				<verse number="14">ಒಂದು ವೇಳೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿ ನಿಮ್ಮನ್ನು ಆಶೀರ್ವದಿಸಬಹುದು; ನಿಮ್ಮ ದೇವರಾದ ಅವರಿಗೆ ಅರ್ಪಿಸಲು ಬೇಕಾದ ನೈವೇದ್ಯಗಳನ್ನು ಧಾರಾಳವಾಗಿ ಅನುಗ್ರಹಿಸಬಹುದು.</verse>
				<verse number="15">ಸಿಯೋನ್ ಶಿಖರದ ಮೇಲೆ ನಿಂತು ಕೊಂಬೂದಿರಿ. ಉಪವಾಸ ದಿನವನ್ನು ಘೋಷಿಸಿರಿ. ಮಹಾಸಭೆಯನ್ನು ಕರೆಯಿರಿ.</verse>
				<verse number="16">ಜನರನ್ನು ಒಟ್ಟುಗೂಡಿಸಿರಿ; ಸಭೆಯನ್ನು ಏರ್ಪಡಿಸಿರಿ; ವೃದ್ಧರನ್ನು, ಮಕ್ಕಳನ್ನು, ಮೊಲೆಗೂಸುಗಳನ್ನು ಕರೆತನ್ನಿರಿ. ವಧೂವರರು ತಮ್ಮ ಕಲ್ಯಾಣಗೃಹದಿಂದ ಹೊರಟುಬರಲಿ.</verse>
				<verse number="17">ಸರ್ವೇಶ್ವರಸ್ವಾಮಿಯ ಪರಿಚಾರಕರಾದ ಯಾಜಕರು ದೇವಾಲಯದ ದ್ವಾರಮಂಟಪಕ್ಕೂ ಬಲಿಪೀಠಕ್ಕೂ ನಡುವೆ ಶೋಕತಪ್ತರಾಗಿ ಹೀಗೆಂದು ಪ್ರಾರ್ಥಿಸಲಿ: “ಕರುಣೆ ತೋರು, ಹೇ ಸರ್ವೇಶ್ವರಾ, ನಿನ್ನ ಪ್ರಜೆಗೆ ನಿಂದೆಯಾಗದಿರಲಿ ನಿನ್ನ ಸ್ವಂತ ಜನತೆಗೆ ಗುರಿಯಾಗದಿರಲಿ ಅವರು ಅನ್ಯರ ತಾತ್ಸಾರಕೆ ‘ನಿಮ್ಮ ದೇವನೆಲ್ಲಿ?’ ಎಂಬ ಪರಕೀಯರ ಹೀಯಾಳಿಕೆಗೆ”</verse>
				<verse number="18">ಆಗ ಸರ್ವೇಶ್ವರ ತಮ್ಮ ದೇಶದ ಮೇಲೆ ಅಭಿಮಾನಗೊಂಡು, ತಮ್ಮ ಜನರಿಗೆ ಕರುಣೆತೋರಿ ಹೀಗೆಂದರು:</verse>
				<verse number="19">“ನಿಮಗೆ ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ಅನುಗ್ರಹಿಸುವೆನು; ನೀವು ಸಂತೃಪ್ತರಾಗುವಿರಿ; ನಿಮ್ಮನ್ನೆಂದಿಗೂ ಅನ್ಯಜನರ ನಿಂದೆಗೆ ಗುರಿಮಾಡೆನು.</verse>
				<verse number="20">“ಉತ್ತರದಿಂದ ಬಂದ ಮಿಡತೆಗಳ ಸೈನ್ಯವನ್ನು ನಿಮ್ಮಿಂದ ತೊಲಗಿಸುವೆನು; ಹಾಳುಬಿದ್ದ ಬಂಜರುಭೂಮಿಗೆ ಅದನ್ನು ಓಡಿಸುವೆನು. ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಹಿಂಭಾಗವನ್ನು ಪಶ್ಚಿಮದ ಸಮುದ್ರಕ್ಕೂ ತಳ್ಳಿಬಿಡುವೆನು. ಅದು ನಿಮಗೆ ಮಾಡಿದ ಘೋರದುಷ್ಕೃತ್ಯಗಳಿಗಾಗಿ ದಂಡಿಸುವೆನು. ಅದರ ಹೆಣಗಳ ದುರ್ವಾಸನೆ ಏರುವುದು; ಗಬ್ಬು ನಾರುವುದು.”</verse>
				<verse number="21">“ಭೂನಿವಾಸಿಗಳೇ, ಭಯಪಡಬೇಡಿರಿ; ಹರ್ಷಿಸಿ ಆನಂದಿಸಿರಿ. ಸರ್ವೇಶ್ವರ ಮಹತ್ಕಾರ್ಯಗಳನ್ನು ಎಸಗಿದ್ದಾರೆ.</verse>
				<verse number="22">ಭೂಜಂತುಗಳೇ ಅಂಜಬೇಡಿ, ವನವೃಕ್ಷಗಳು ಫಲಭರಿತವಾಗಿರುವುವು; ಅಂಜೂರ, ದ್ರಾಕ್ಷಿಗಳೆಲ್ಲವೂ ತುಂಬಿ ತುಳುಕುವುವು.</verse>
				<verse number="23">“ಸಿಯೋನಿನ ಜನರೇ, ಹರ್ಷಿಸಿರಿ; ಸ್ವಾಮಿ ದೇವರಾದ ಸರ್ವೇಶ್ವರ ನಿಮಗೆ ಮಾಡಿದ ಉಪಕಾರಗಳಿಗಾಗಿ ಆನಂದಿಸಿರಿ. ನಿಮಗೆ ಅವರು ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು; ಮುಂಗಾರು ಹಿಂಗಾರು ಮಳೆಗಳನ್ನು ಸುರಿಸುವರು.</verse>
				<verse number="24">ಕಣಗಳಲ್ಲಿ ಗೋದಿ ರಾಶಿರಾಶಿಯಾಗಿರುವುದು. ತೊಟ್ಟಿಗಳಲ್ಲಿ ದ್ರಾಕ್ಷಾರಸ, ತೈಲಗಳು ತುಂಬಿರುವುವು.</verse>
				<verse number="25">ಗುಂಪುಮಿಡತೆ, ಕಂಬಳಿಮಿಡತೆ, ಚೂರಿಮಿಡತೆ, ನಾನು ಕಳುಹಿಸಿದ ಈ ಮಿಡತೆಗಳ ಸೈನ್ಯಗಳು ತಿಂದು ನಷ್ಟಮಾಡಿದ ವರ್ಷಗಳನ್ನು ನಿಮಗೆ ಭರಿಸಿಕೊಡುವೆನು.</verse>
				<verse number="26">ನೀವು ಹೊಟ್ಟೆತುಂಬ ಊಟಮಾಡಿ ತೃಪ್ತರಾಗುವಿರಿ; ನಿಮಗಾಗಿ ಮಹತ್ಕಾರ್ಯಗಳನ್ನು ಎಸಗಿದ ದೇವರಾದ ಸರ್ವೇಶ್ವರಸ್ವಾಮಿಯ ನಾಮವನ್ನು ಕೊಂಡಾಡುವಿರಿ; ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು.</verse>
				<verse number="27">ನಾನೇ ಇಸ್ರಯೇಲಿನ ಮಧ್ಯೆ ನೆಲೆಯಾಗಿ ಇರುವವನು ನಾನೇ ನಿಮ್ಮ ಸರ್ವೇಶ್ವರನಾದ ದೇವರು; ನಾನಲ್ಲದೆ ಬೇರೆ ದೇವರು ನಿಮಗಿಲ್ಲ. ನನ್ನ ಜನರಿಗೆ ಎಂದಿಗೂ ಆಶಾಭಂಗವಾಗದು ಎಂದು ನಿಮಗೆ ಮನದಟ್ಟಾಗುವುದು.</verse>
				<verse number="28">“ತರುವಾಯ ಎಲ್ಲಾ ಮಾನವರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಪುತ್ರಪುತ್ರಿಯರು ಪ್ರವಾದನೆ ಮಾಡುವರು; ನಿಮ್ಮ ಹಿರಿಯರು ಸ್ವಪ್ನಶೀಲರಾಗುವರು; ನಿಮ್ಮ ಯುವಕರಿಗೆ ದಿವ್ಯದರ್ಶನಗಳಾಗುವುವು.</verse>
				<verse number="29">ಆ ದಿನಗಳಲ್ಲಿ ದಾಸದಾಸಿಯರ ಮೇಲೂ ನನ್ನ ಆತ್ಮವನ್ನು ಸುರಿಸುವೆನು.</verse>
				<verse number="30">ಭೂಮ್ಯಾಕಾಶಗಳಲ್ಲಿ ಸೂಚಕಕಾರ್ಯಗಳನ್ನು ಮಾಡುವೆನು. ರಕ್ತಧಾರೆ, ಅಗ್ನಿಪ್ರಳಯ, ಧೂಮಕೇತು ಕಾಣಿಸುವಂತೆ ಮಾಡುವೆನು.</verse>
				<verse number="31">ಸರ್ವೇಶ್ವರಸ್ವಾಮಿಯ ಭಯಂಕರ ಮಹಾದಿನದ ಮುಂಚೆ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ರಕ್ತಗೆಂಪಾಗುವನು.</verse>
				<verse number="32">ಆದರೆ ಸರ್ವೇಶ್ವರಸ್ವಾಮಿಯ ನಾಮಸ್ಮರಣೆ ಮಾಡುವವರೆಲ್ಲರೂ ಜೀವೋದ್ಧಾರವನ್ನು ಪಡೆಯುವರು. ಅವರೇ ತಿಳಿಸಿರುವಂತೆ ಸಿಯೋನ್ ಪರ್ವತದಲ್ಲೂ ಜೆರುಸಲೇಮಿನಲ್ಲೂ ಅನೇಕರಿಗೆ ಮುಕ್ತಿ ದೊರಕುವುದು. ಅಳಿದುಳಿದವರಲ್ಲಿ ಆ ಸ್ವಾಮಿಯ ಕರೆಹೊಂದಿದವರು ಬದುಕುವರು.”</verse>
			</chapter>
			<chapter number="3">
				<verse number="1">ಸರ್ವೇಶ್ವರಸ್ವಾಮಿಯ ನುಡಿಯಿದು: “ಆ ದಿನಗಳಲ್ಲಿ ಜುದೇಯ ಹಾಗೂ ಜೆರುಸಲೇಮಿನ ಸಿರಿಸಂಪತ್ತನ್ನು ಮರಳಿ ಕೊಡುವೆನು.</verse>
				<verse number="2">ಎಲ್ಲಾ ರಾಷ್ಟ್ರಗಳನ್ನು ನ್ಯಾಯತೀರ್ಪಿನ ಜೊಸೆಫಾತ್ ಕಣಿವೆಗೆ ಬರಮಾಡುವೆನು. ನನ್ನ ಪ್ರಜೆಯೂ ಸ್ವಜನರೂ ಆದ ಇಸ್ರಯೇಲರಿಗೆ ಅವರು ಮಾಡಿದ ಹಿಂಸೆಗಾಗಿ ನ್ಯಾಯಕೇಳುವೆನು. ಅವರು ನನ್ನ ಪ್ರಜೆಯನ್ನು ದೇಶವಿದೇಶಗಳಿಗೆ ಚದರಿಸಿದ್ದಾರೆ. ನನ್ನ ನಾಡನ್ನು ಹಂಚಿಕೊಂಡಿದ್ದಾರೆ.</verse>
				<verse number="3">ನನ್ನ ಜನರಿಗಾಗಿ ಚೀಟುಹಾಕಿದ್ದಾರೆ. ವೇಶ್ಯಾಚಾರಕ್ಕಾಗಿ, ಮದ್ಯಪಾನಕ್ಕಾಗಿ, ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ಮಾರಾಟ ಮಾಡಿದ್ದಾರೆ.</verse>
				<verse number="4">“ಟೈರ್, ಸಿದೋನ್ ಮತ್ತು ಫಿಲಿಷ್ಟಿಯ ಪ್ರಾಂತ್ಯಗಳೇ, ನನ್ನ ಮೇಲೆ ನಿಮಗಿರುವ ದೂರು ಯಾವುದು? ನನಗೆ ಪ್ರತೀಕಾರ ಮಾಡಬೇಕೆಂದಿರುವಿರೋ? ಹಾಗೇನಾದರೂ ಮಾಡಿದ್ದೇ ಆದರೆ, ನೀವು ಮಾಡಿದ ಕೇಡನ್ನು ತಡಮಾಡದೆ ನಿಮ್ಮ ತಲೆಗೇ ತರುವೆನು.</verse>
				<verse number="5">ನನ್ನ ಬೆಳ್ಳಿಬಂಗಾರಗಳನ್ನು ಅತ್ಯಮೂಲ್ಯವಾದ ಬೊಕ್ಕಸಗಳನ್ನು ದೋಚಿಕೊಂಡು ನಿಮ್ಮ ದೇವಾಲಯಗಳಿಗೆ ಕೊಂಡೊಯ್ದಿದ್ದೀರಿ.</verse>
				<verse number="6">ಜುದೇಯ ಮತ್ತು ಜೆರುಸಲೇಮಿನ ಜನರನ್ನು ಗ್ರೀಕರಿಗೆ ಮಾರಿಬಿಟ್ಟಿದ್ದೀರಿ; ಅವರನ್ನು ತಾಯ್ನಾಡಿನಿಂದ ದೂರಮಾಡಿದ್ದೀರಿ.</verse>
				<verse number="7">ಇಂತಿರಲು, ನೀವು ಅವರನ್ನು ಮಾರಿದ ಊರುಗಳಿಂದ ದಂಗೆಯೆದ್ದು ಹೊರಬರುವಂತೆ ಅವರನ್ನು ಹುರಿದುಂಬಿಸುವೆನು. ನೀವು ಮಾಡಿದ ಕೇಡನ್ನು ನಿಮ್ಮ ತಲೆಗೇ ತರುವೆನು.</verse>
				<verse number="8">ನಿಮ್ಮ ಪುತ್ರಪುತ್ರಿಯರನ್ನು ಯೆಹೂದ್ಯರಿಗೆ ಮಾರುವೆನು, ಅವರು ಆ ಮಕ್ಕಳನ್ನು ದೂರದಲ್ಲಿರುವ ಶೆಬದವರಿಗೆ ಮಾರಿಬಿಡುವರು. ಸರ್ವೇಶ್ವರನಾದ ನನ್ನ ನುಡಿಯಿದು.”</verse>
				<verse number="9">“ರಾಷ್ಟ್ರಗಳಿಗೆ ಹೀಗೆ ಪ್ರಕಟಿಸಿರಿ: ರಾಷ್ಟ್ರಗಳೇ, ಯುದ್ಧಸನ್ನದ್ಧರಾಗಿರಿ. ಶೂರರನ್ನು ಎಚ್ಚರಗೊಳಿಸಿರಿ; ಯೋಧರೆಲ್ಲರೂ ಒಟ್ಟುಗೂಡಲಿ; ಯುದ್ಧಕ್ಕೆ ಹೊರಡಲಿ.</verse>
				<verse number="10">ನಿಮ್ಮ ನೇಗಿಲುಗಳನ್ನು ಕುಲುಮೆಗೆ ಹಾಕಿ ಕತ್ತಿಗಳನ್ನಾಗಿ ಮಾಡಿರಿ; ಕುಡುಗೋಲುಗಳನ್ನು ಭರ್ಜಿಗಳನ್ನಾಗಿ ಮಾರ್ಪಡಿಸಿರಿ; ಬಲಹೀನನು ಸಹ ಬಲಾಢ್ಯನಂತೆ ಯುದ್ಧಕ್ಕೆ ನಿಂತುಕೊಳ್ಳಲಿ.</verse>
				<verse number="11">ಸುತ್ತಮುತ್ತಲಿನ ರಾಷ್ಟ್ರಗಳೇ, ನೀವೆಲ್ಲರೂ ತ್ವರೆಮಾಡಿ ಕೂಡಿಬನ್ನಿ,” ಸರ್ವೇಶ್ವರ, ನಿಮ್ಮ ಯೋಧರನ್ನು ರಣರಂಗಕ್ಕೆ ಇಳಿಸಿರಿ.</verse>
				<verse number="12">“ರಾಷ್ಟ್ರಗಳು ಎಚ್ಚೆತ್ತು ಸರ್ವೇಶ್ವರಸ್ವಾಮಿಯ ನ್ಯಾಯತೀರ್ಪಿನ ಕಣಿವೆಗೆ ಇಳಿಯಲಿ. ಸುತ್ತಮುತ್ತ ನೆರೆದಿರುವ ರಾಷ್ಟ್ರಗಳಿಗೆ ನ್ಯಾಯತೀರಿಸಲು ಅಲ್ಲಿ ನಾನು ಆಸೀನನಾಗಿರುವೆನು.</verse>
				<verse number="13">ಸ್ವಾಮಿಯ ಶೂರರೇ, ಕುಡುಗೋಲನ್ನು ಹಾಕಿರಿ; ಫಲ ಪಕ್ವವಾಗಿದೆ. ಬನ್ನಿ, ದ್ರಾಕ್ಷಿಯನ್ನು ತುಳಿಯಿರಿ; ಆಲೆಯು ಭರ್ತಿಯಾಗಿದೆ, ತೊಟ್ಟಿಗಳು ತುಂಬಿತುಳುಕುತ್ತಿವೆ; ರಾಷ್ಟ್ರಗಳ ದುಷ್ಟತನವು ಮಿತಿಮೀರಿದೆ.</verse>
				<verse number="14">“ಇಗೋ, ನ್ಯಾಯತೀರ್ಪಿನ ಕಣಿವೆಯಲ್ಲಿ ತಂಡೋಪತಂಡವಾದ ಜನಸ್ತೋಮ! ತೀರ್ಪಿನ ಕಣಿವೆಯಲ್ಲಿರುವವರಿಗೆ ಸರ್ವೇಶ್ವರನ ದಿನ ಸನ್ನಿಹಿತ!</verse>
				<verse number="15">ಸೂರ್ಯಚಂದ್ರಗಳು ಮಂಕಾಗುತ್ತವೆ. ನಕ್ಷತ್ರಗಳು ಕಾಂತಿಗುಂದುತ್ತವೆ.</verse>
				<verse number="16">ಸ್ವಾಮಿ ಸಿಯೋನಿನಿಂದ ಗರ್ಜಿಸುತ್ತಾರೆ, ಜೆರುಸಲೇಮಿನಿಂದ ಅವರ ಧ್ವನಿ ಮೊಳಗುತ್ತದೆ. ಭೂಮ್ಯಾಕಾಶಗಳು ನಡುಗುತ್ತವೆ. ಆದರೂ ಸರ್ವೇಶ್ವರ ತಮ್ಮ ಜನರಿಗೆ ಆಶ್ರಯ; ಇಸ್ರಯೇಲರಿಗೆ ರಕ್ಷಣಾ ದುರ್ಗ.</verse>
				<verse number="17">“ಇಸ್ರಯೇಲರೇ, ಕೇಳಿ, ಪವಿತ್ರಪರ್ವತವಾದ ಸಿಯೋನಿನಲ್ಲಿ ನೆಲೆಯಾಗಿರುವ ನಿಮ್ಮ ಸರ್ವೇಶ್ವರಸ್ವಾಮಿ ದೇವರು ನಾನೇ ಎಂದು ಆಗ ನಿಮಗೆ ಮನದಟ್ಟಾಗುವುದು. ಜೆರುಸಲೇಮ್ ಪುಣ್ಯಕ್ಷೇತ್ರವೆನಿಸಿಕೊಳ್ಳುವುದು. ಪರಕೀಯರು ಅದನ್ನೆಂದಿಗೂ ಆಕ್ರಮಿಸರು.</verse>
				<verse number="18">ಆ ದಿನಗಳಲ್ಲಿ ಬೆಟ್ಟಗುಡ್ಡಗಳಿಂದ ದ್ರಾಕ್ಷಾರಸ ಮತ್ತು ಹಾಲುತುಪ್ಪ ಹರಿಯುವುದು. ಜುದೇಯ ನಾಡಿನ ಹಳ್ಳಕೊಳ್ಳಗಳು ನೀರಿನಿಂದ ತುಂಬಿರುವುವು. ದೇವಾಲಯದಿಂದ ನೀರು ಚಿಮ್ಮಿಬಂದು ಆಕಾಚಿಯದ ಹಳ್ಳವನ್ನು ತಂಪಾಗಿಸುವುದು.</verse>
				<verse number="19">“ಈಜಿಪ್ಟ್ ಪಾಳುಬೀಳುವುದು, ಎದೋಮ್ ಬೆಂಗಾಡಾಗುವುದು. ಕಾರಣ, ಈ ಎರಡು ಪಟ್ಟಣದವರು ಜುದೇಯ ನಾಡಿನ ಮೇಲೆ ಧಾಳಿಮಾಡಿದ್ದಾರೆ. ನಿರ್ದೋಷಿಗಳ ರಕ್ತವನ್ನು ಸುರಿಸಿದ್ದಾರೆ.</verse>
				<verse number="20">ಹತರಾದವರು ನಿರ್ದೋಷಿಗಳೆಂದು ನಿರ್ಣಯಿಸುವೆನು. ಕೊಲೆಪಾತಕರನ್ನು ದಂಡಿಸಿಯೇ ತೀರುವೆನು.</verse>
				<verse number="21">ಆದರೆ ಜುದೇಯ ನಾಡು, ಜೆರುಸಲೇಮ್ ನಗರ ಜನಭರಿತವಾಗಿ ಇರುವುದು. ಸರ್ವೇಶ್ವರಸ್ವಾಮಿಯಾದ ನಾನು ಸಿಯೋನ್ ಪರ್ವತದಲ್ಲಿ ನೆಲೆಯಾಗಿರುವೆನು.”</verse>
			</chapter>
		</book>
		<book number="30">
			<chapter number="1">
				<verse number="1">ಜುದೇಯದಲ್ಲಿ ಮಹಾ ಭೂಕಂಪ ಆಗುವುದಕ್ಕೆ ಎರಡು ವರ್ಷಗಳ ಮುಂಚೆ, ತೆಕೋವದ ಕುರುಬರಲ್ಲೊಬ್ಬನಾದ ಆಮೋಸನಿಗೆ ಇಸ್ರಯೇಲಿನ ವಿಷಯವಾಗಿ ದೇವರಿಂದ ಬಂದ ಪ್ರಕಟನೆಗಳು ಇವು. ಆಗ ಜುದೇಯ ನಾಡನ್ನು ಉಜ್ಜೀಯನೆಂಬ ಅರಸನು ಆಳುತ್ತಿದ್ದ ಕಾಲ. ಅಂತೆಯೇ, ಯೋವಾಷನ ಮಗನಾದ ಯಾರೊಬ್ಬಾಮನು ಇಸ್ರಯೇಲನ್ನು ಆಳುತ್ತಿದ್ದ ಕಾಲ.</verse>
				<verse number="2">ಆಮೋಸನ ಪ್ರಕಟನೆ: ಗರ್ಜಿಸುತಿಹನು ಸರ್ವೇಶ್ವರ ಸಿಯೋನಿನಿಂದ ಧ್ವನಿಗೈಯುತಿಹನು ಜೆರುಸಲೇಮಿನಿಂದ; ಬಾಡಿಹೋಗುತ್ತಿವೆ ಕುರುಬರಾ ಹುಲ್ಲುಗಾವಲುಗಳು ಒಣಗಿಹೋಗುತ್ತಿವೆ ಕಾರ್ಮೆಲ್ ಗುಡ್ಡದ ನೆತ್ತಿಯ ಗಿಡಗಳು.</verse>
				<verse number="3">ಸರ್ವೇಶ್ವರ ಇಂತೆನ್ನುತ್ತಾರೆ: ದಮಸ್ಕದ ಜನರು ಪದೇಪದೇ ಮಾಡಿರುವ ದ್ರೋಹಗಳಿಗಾಗಿ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಕಬ್ಬಿಣದ ಬಡಿಗೆಯಿಂದ ಧಾನ್ಯಗಳನ್ನು ಒಕ್ಕುವಂತೆ ಅವರು ಗಿಲ್ಯಾದ್ ಜನರನ್ನು ಬಡಿದುಬಿಟ್ಟಿದ್ದಾರೆ.</verse>
				<verse number="4">ನಾನು ಹಜಾಯೇಲನ ಅರಮನೆಯ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೆನ್‍ಹದದನ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.</verse>
				<verse number="5">ದಮಸ್ಕದ ಮಹಾದ್ವಾರಗಳನ್ನು ಕೆಡವಿಹಾಕುವೆನು. ಆವೇನಿನ ಕಣಿವೆಯಲ್ಲಿ ಸಿಂಹಾಸನಾರೂಢನಾಗಿರುವವನನ್ನು ಮತ್ತು ಬೆತ್ - ಏದೆನ್‍ನಿಂದ ಆಡಳಿತಾಧಿಕಾರಿಯನ್ನು ನಿರ್ಮೂಲಮಾಡುವೆನು. ಸಿರಿಯದ ಜನರು ಕೀರ್ ಪ್ರಾಂತ್ಯಕ್ಕೆ ಸೆರೆಯಾಳುಗಳಾಗಿ ಹೋಗುವರು.” ಇದು ಸರ್ವೇಶ್ವರಸ್ವಾಮಿಯ ನುಡಿ.</verse>
				<verse number="6">ಸರ್ವೇಶ್ವರ ಇಂತೆನ್ನುತ್ತಾರೆ: “ಗಾಜದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಇಡೀ ಜನಾಂಗವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ.</verse>
				<verse number="7">ಆದಕಾರಣ ನಾನು ಗಾಜದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.</verse>
				<verse number="8">ನಾನು ಅಷ್ಡೋದಿನಲ್ಲಿ ಸಿಂಹಾಸನಾರೂಢನಾಗಿ ಇರುವವನನ್ನೂ ಅಷ್ಕೆಲೋನಿನಲ್ಲಿ ಆಡಳಿತಾಧಿಕಾರಿಯನ್ನೂ ನಿರ್ಮೂಲ ಮಾಡುವೆನು. ಎಕ್ರೋನಿನ ಪಟ್ಟಣವನ್ನು ಶಿಕ್ಷಿಸುವೆನು. ಫಿಲಿಷ್ಟಿಯರಲ್ಲಿ ಅಳಿದುಳಿದವರೆಲ್ಲರೂ ನಾಶವಾಗಿಹೋಗುವರು,” ಇದೂ ಸರ್ವೇಶ್ವರಸ್ವಾಮಿಯ ನುಡಿ.</verse>
				<verse number="9">ಸರ್ವೇಶ್ವರ ಇಂತೆನ್ನುತ್ತಾರೆ: “ಟೈರ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಸೋದರಪ್ರೇಮದ ಒಡಂಬಡಿಕೆಯನ್ನು ಅವರು ಮರೆತುಬಿಟ್ಟರು. ಅವರು ಇಡೀ ರಾಷ್ಟ್ರವನ್ನೇ ಸೆರೆಹಿಡಿದು ಎದೋಮ್ ನಾಡಿಗೆ ಗಡೀಪಾರು ಮಾಡಿದ್ದಾರೆ.</verse>
				<verse number="10">ಆದಕಾರಣ ನಾನು ಟೈರಿನ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.”</verse>
				<verse number="11">ಸರ್ವೇಶ್ವರ ಇಂತೆನ್ನುತ್ತಾರೆ: ಎದೋಮ್ ಪ್ರಾಂತ್ಯದ ಜನರು ಪದೇಪದೇ ಮಾಡಿದ ದ್ರೋಹಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ಸೋದರ ನಾಡಿನವರಾದ ಇಸ್ರಯೇಲರನ್ನು ಓಡಿಸಿದರು. ಅವರಿಗೆ ಕರುಣೆತೋರದೆ, ಕೊನೆಯವರೆವಿಗೂ ರೋಷವನ್ನೇ ಸಾಧಿಸಿದರು.</verse>
				<verse number="12">ಆದುದರಿಂದ ನಾನು ತೇಮಾನ್ ಪಟ್ಟಣದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೊಚ್ರದ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.</verse>
				<verse number="13">ಸರ್ವೇಶ್ವರ ಇಂತೆನ್ನುತ್ತಾರೆ: “ಅಮ್ಮೋನ್ಯರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ತಮ್ಮ ನಾಡಿನ (ಗಡಿ) ವಿಸ್ತರಣೆಗಾಗಿ ಗರ್ಭಿಣಿಯರ ಹೊಟ್ಟೆಯನ್ನೇ ತಿವಿದು ಸೀಳಿಬಿಟ್ಟಿದ್ದಾರೆ.</verse>
				<verse number="14">ಆದಕಾರಣ ನಾನು ರಬ್ಬದ ಪ್ರಾಕಾರಗಳ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಅದರ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು. ಆಗ ಯುದ್ಧಾರ್ಭಟವೂ ಚಂಡಮಾರುತದಂಥ ಪ್ರಚಂಡ ಕಾದಾಟವೂ ಉಂಟಾಗುವುವು.</verse>
				<verse number="15">ಅರಸನೂ ರಾಜ್ಯಾಧಿಕಾರಿಗಳೂ ಒಟ್ಟಾಗಿ ಸೆರೆಹೋಗುವರು.” ಇದು ಸರ್ವೇಶ್ವರಸ್ವಾಮಿಯ ನುಡಿ.</verse>
			</chapter>
			<chapter number="2">
				<verse number="1">ಸರ್ವೇಶ್ವರ ಇಂತೆನ್ನುತ್ತಾರೆ: “ಮೋವಾಬಿನ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಸುಣ್ಣಮಾಡಿದ್ದಾರೆ.</verse>
				<verse number="2">ಆದಕಾರಣ ಮೋವಾಬಿನ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಕೆರಿಯೋತಿನ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು. ಸೈನಿಕರ ಆರ್ಭಟ, ರಣಕಹಳೆಗಳ ಗರ್ಜನೆ, ಯುದ್ಧದ ಕೋಲಾಹಲ - ಇವುಗಳ ಮಧ್ಯೆ ಮೋವಾಬಿನ ಜನರು ಮಡಿಯುವರು.</verse>
				<verse number="3">ನಾನು ಅವರ ಅಧಿಪತಿಯನ್ನು ಕೊಂದು, ರಾಜ್ಯಾಧಿಕಾರಿಗಳನ್ನು ಸಂಹರಿಸುವೆನು.” ಇದು ಸರ್ವೇಶ್ವರ ಸ್ವಾಮಿಯ ನುಡಿ.</verse>
				<verse number="4">ಸರ್ವೇಶ್ವರ ಇಂತೆನ್ನುತ್ತಾರೆ: “ಜುದೇಯದ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಏಕೆಂದರೆ ಅವರು ನನ್ನ ಧರ್ಮಶಾಸ್ತ್ರವನ್ನು ತೃಣೀಕರಿಸಿದ್ದಾರೆ. ನನ್ನ ವಿಧಿನಿಯಮಗಳನ್ನು ಮೀರಿದ್ದಾರೆ. ಅವರ ಪೂರ್ವಜರು ಆರಾಧಿಸಿದ ಸುಳ್ಳುದೇವತೆಗಳನ್ನು ಪೂಜಿಸುತ್ತಾ ದಾರಿತಪ್ಪಿದ್ದಾರೆ.</verse>
				<verse number="5">ಆದಕಾರಣ ನಾನು ಜುದೇಯದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಜೆರುಸಲೇಮಿನ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು.”</verse>
				<verse number="6">ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲಿನ ಜನರು ಪದೇಪದೇ ಮಾಡಿದ ಪಾಪಗಳಿಗಾಗಿ ಅವರಿಗೆ ಆಗಬೇಕಾದ ದಂಡನೆಯನ್ನು ನಾನು ರದ್ದುಗೊಳಿಸುವುದಿಲ್ಲ. ಅವರು ಬೆಳ್ಳಿಬಂಗಾರಕ್ಕಾಗಿ ಸಜ್ಜನರನ್ನು ಮಾರಿಬಿಡುತ್ತಾರೆ. ಒಂದು ಜೊತೆ ಜೋಡುಗಳ ಸಾಲವನ್ನು ಸಹ ತೀರಿಸಲಾಗದ ಬಡಬಗ್ಗರನ್ನೂ ವಿಕ್ರಯಿಸುತ್ತಾರೆ.</verse>
				<verse number="7">ದಿಕ್ಕಿಲ್ಲದವರ ತಲೆಗಳನ್ನು ಬೀದಿಯ ಧೂಳಿನಂತೆ ತುಳಿದುಬಿಡುತ್ತಾರೆ. ದೀನದಲಿತರಿಗೆ ನ್ಯಾಯ ದೊರಕದಂತೆ ಮಾಡುತ್ತಾರೆ. ತಂದೆಯೂ ಮಗನೂ ಒಬ್ಬ ಮಹಿಳೆಯನ್ನು ಇಟ್ಟುಕೊಂಡು ನನ್ನ ಪವಿತ್ರನಾಮಕ್ಕೆ ಅಪಕೀರ್ತಿ ತರುತ್ತಾರೆ.</verse>
				<verse number="8">ಪ್ರತಿಯೊಂದು ಪ್ರಾರ್ಥನಾಲಯದಲ್ಲಿಯೂ ಮಲಗುತ್ತಾರೆ. ಬಡವರಿಂದ ಅಡವಾಗಿ ಇಟ್ಟುಕೊಂಡ ಬಟ್ಟೆಗಳ ಮೇಲೆಯೇ ಬಿದ್ದಿರುತ್ತಾರೆ. ವಿಧಿ ಇಲ್ಲದೆ ದಂಡತೆರಬೇಕಾದವರಿಂದ ಹೆಂಡವನ್ನು ತಂದು ದೇವರ ಮಂದಿರದಲ್ಲೇ ಕುಡಿಯುತ್ತಾರೆ.</verse>
				<verse number="9">“ಆದರೂ ನನ್ನ ಜನರೇ, ನಿಮಗೆ ಎದುರಾಗಿ ನಿಂತ ಅಮೋರ್ಯದವರನ್ನು ಧ್ವಂಸಮಾಡಿದೆನು. ದೇವದಾರು ಮರದಂತೆ ಎತ್ತರವಾಗಿ, ಅಲ್ಲೋನ್ ಮರದಂತೆ ಬಲಿಷ್ಠರಾಗಿ ಇದ್ದ ನಿಮ್ಮ ಶತ್ರು ಅಮೋರ್ಯದವರನ್ನು ನಾಶಪಡಿಸಿದೆನು. ಮರದ ಮುಡಿಯಿಂದ ಫಲವನ್ನೂ ಅಡಿಯಿಂದ ಬೇರನ್ನೂ ಕಿತ್ತುಹಾಕುವಂತೆ ಅವರನ್ನು ನಿರ್ಮೂಲಮಾಡುವೆನು.</verse>
				<verse number="10">ಈಜಿಪ್ಟಿನಿಂದ ನಿಮ್ಮನ್ನು ಹೊರತಂದವನು ನಾನೇ. ನಲವತ್ತು ವರ್ಷಗಳ ಕಾಲ ಅರಣ್ಯದ ಮಾರ್ಗವಾಗಿ ನಿಮ್ಮನ್ನು ನಡೆಸಿ ಕರೆತಂದು, ಅಮೋರ್ಯದವರ ನಾಡನ್ನು ನಿಮಗೆ ದೊರಕಿಸಿಕೊಟ್ಟವನು ನಾನೇ.</verse>
				<verse number="11">ನಿಮ್ಮ ಪುತ್ರರಲ್ಲಿ ಕೆಲವರನ್ನು ಪ್ರವಾದಿಗಳನ್ನಾಗಿ, ನಿಮ್ಮ ಯುವಜನರಲ್ಲಿ ಕೆಲವರನ್ನು ನಾಜೀರರನ್ನಾಗಿ ಸಿದ್ಧಪಡಿಸಿದವನು ನಾನೇ. ಇಸ್ರಯೇಲಿನ ಜನರೇ, ಇದು ನಿಜವಲ್ಲವೇ? ನೀವೇ ಹೇಳಿ.</verse>
				<verse number="12">“ನೀವಾದರೋ, ನಾಜೀರರು ವ್ರತಮುರಿದು ಮದ್ಯಪಾನ ಸೇವಿಸುವಂತೆ ಮಾಡಿದಿರಿ. ಪ್ರವಾದಿಗಳು ಪ್ರವಾದನೆ ಹೇಳದಂತೆ ಆಜ್ಞೆಮಾಡಿದಿರಿ.</verse>
				<verse number="13">ಆದ್ದರಿಂದ ಧಾನ್ಯ ತುಂಬಿದ ಬಂಡೆ ನಸುಕುವಂತೆ ನಿಮ್ಮನ್ನು ಇದ್ದಲ್ಲಿಯೇ ನಸುಕಿಬಿಡುವೆನು.</verse>
				<verse number="14">ನಿಮ್ಮಲ್ಲಿ ದೌಡೋಡುವವನು ಕೂಡ ತಲೆತಪ್ಪಿಸಿಕೊಳ್ಳಲಾರನು. ಬಲಿಷ್ಠನೂ ಬಲಹೀನನಾಗುವನು. ಪರಾಕ್ರಮಿಯೂ ಪ್ರಾಣ ಉಳಿಸಿಕೊಳ್ಳಲಾರನು.</verse>
				<verse number="15">ಬಿಲ್ಲು ಹಿಡಿದವನೂ ನಿಲ್ಲಲಾರನು. ಓಟಗಾರನೂ ಸಿಕ್ಕಿಬೀಳುವನು. ರಾಹುತನು ರಕ್ಷಣೆ ಪಡೆಯಲಾರನು.</verse>
				<verse number="16">ಪ್ರಬಲವಾಗಿದ್ದವರಲ್ಲಿ ಧೀರನಾದವನು ಸಹ ನಗ್ನನಾಗಿ ಪಲಾಯನ ಮಾಡುವನು.” ಇದು ಸರ್ವೇಶ್ವರಸ್ವಾಮಿಯ ನುಡಿ.</verse>
			</chapter>
			<chapter number="3">
				<verse number="1">ಇಸ್ರಯೇಲಿನ ಜನರೇ, ಕಿವಿಗೊಡಿ. ಈಜಿಪ್ಟ್ ದೇಶದಿಂದ ನಿಮ್ಮನ್ನು ಬಿಡುಗಡೆಮಾಡಿ ಕರೆತಂದ ಸರ್ವೆಶ್ವರ ನಿಮ್ಮ ವಿರುದ್ಧವಾಗಿ ನುಡಿಯುವ ಮಾತುಗಳನ್ನು ಆಲಿಸಿರಿ:</verse>
				<verse number="2">“ಜಗದ ಜನಾಂಗಗಳಲ್ಲಿ ನನಗೆ ಆಪ್ತರಾದವರೆಂದರೆ ನೀವು. ಆದಕಾರಣ ನೀವು ಮಾಡಿರುವ ಎಲ್ಲಾ ಪಾಪಗಳಿಗೆ ತಕ್ಕ ಪ್ರಾಯಶ್ಚಿತ್ತವನ್ನು ಸವಿಯುವಂತೆ ಮಾಡುವೆನು.”</verse>
				<verse number="3">ಗೊತ್ತುಗುರಿಯಿಲ್ಲದೆ ಯಾರಾದರಿಬ್ಬರು ಜೊತೆಯಾಗಿ ಪ್ರಯಾಣಮಾಡುವುದುಂಟೆ?</verse>
				<verse number="4">ಬೇಟೆ ಕಂಡಾಗಲ್ಲದೆ ಸಿಂಹವು ಕಾಡಿನಲ್ಲಿ ಗರ್ಜಿಸುವುದುಂಟೆ? ಏನನ್ನೂ ಹಿಡಿಯದೆ ಯುವಸಿಂಹವು ಗುಹೆಯಲ್ಲೆ ಗುರುಗುಟ್ಟುವುದುಂಟೆ?</verse>
				<verse number="5">ಕಾಳಿಲ್ಲದೆ ಪಕ್ಷಿ ಬಲೆಗೆ ಬೀಳುವುದುಂಟೆ? ಏನೂ ಸಿಕ್ಕಿಕೊಳ್ಳದೆ ಬೋನು ಮೇಲಕ್ಕೆ ಏರುವುದುಂಟೆ?</verse>
				<verse number="6">ರಣಕಹಳೆ ಮೊಳಗಲು ಜನರು ಬೆದರದೆ ಇರುವುದುಂಟೆ? ಸರ್ವೇಶ್ವರನಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೆ?</verse>
				<verse number="7">ತನ್ನ ಪರಿಚಾರಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಸ್ವಾಮಿ ಸರ್ವೇಶ್ವರ ಏನೂ ಮಾಡುವುದಿಲ್ಲ.</verse>
				<verse number="8">ಸಿಂಹದ ಗರ್ಜನೆಯನ್ನು ಕೇಳಿ ಹೆದರದಿರುವವರು ಯಾರು? ಸ್ವಾಮಿ ಸರ್ವೇಶ್ವರನ ನುಡಿಯನ್ನು ಕೇಳಿ ಪ್ರವಾದನೆಮಾಡದಿರುವವರು ಯಾರು?”</verse>
				<verse number="9">ಅಷ್ಡೋದಿನ ಅರಮನೆಗಳಲ್ಲೂ ಈಜಿಪ್ಟಿನ ಸೌಧಗಳಲ್ಲೂ ಹೀಗೆಂದು ಪ್ರಕಟಿಸಿರಿ; “ಸಮಾರ್ಯದ ಬೆಟ್ಟಗುಡ್ಡಗಳಿಗೆ ಕೂಡಿಬನ್ನಿ. ಪಟ್ಟಣದಲ್ಲಿ ಎಷ್ಟೊಂದು ಗಲಭೆಗೊಂದಲ, ಎಷ್ಟೊಂದು ಹಿಂಸಾಚಾರ ನಡೆಯುತ್ತಿದೆ, ನೋಡಿ.</verse>
				<verse number="10">“ಹಿಂಸಾಚಾರದಿಂದ ಹಾಗು ಸುಲಿಗೆಯಿಂದ ಗಳಿಸಿದ್ದನ್ನು ಜನರು ತಮ್ಮ ಮಳಿಗೆಗಳಲ್ಲಿ ತುಂಬಿಸಿಕೊಂಡಿದ್ದಾರೆ. ಅಂಥ ಜನರಿಗೆ ನ್ಯಾಯನೀತಿ ತಿಳಿಯದು,” ಎಂದು ಸರ್ವೇಶ್ವರ ಹೇಳುತ್ತಾರೆ.</verse>
				<verse number="11">ಇಂತಿರಲು ಸ್ವಾಮಿ ಸರ್ವೇಶ್ವರ ಹೇಳುವುದೇನೆಂದರೆ: “ಶತ್ರುಗಳು ನಿಮ್ಮ ನಾಡಿಗೆ ಮುತ್ತಿಗೆಹಾಕುವರು. ನಿಮ್ಮ ಕೋಟೆಕೊತ್ತಲಗಳನ್ನು ನೆಲಸಮಮಾಡುವರು. ನಿಮ್ಮ ಸೌಧಗಳನ್ನು ಸೂರೆಮಾಡುವರು.”</verse>
				<verse number="12">ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಸಿಂಹದ ಬಾಯಿಗೆ ಸಿಕ್ಕಿದ ಕುರಿಯ ಅಂಗಗಳಲ್ಲಿ ಕಿವಿಕಾಲು ಮಾತ್ರ ಕುರುಬನಿಗೆ ದಕ್ಕೀತು. ಅಂತೆಯೇ ಸಮಾರ್ಯದ ಸುಖಾಸನಗಳಲ್ಲೂ ಸುಪ್ಪತ್ತಿಗೆ ಮೇಲೂ ಹಾಯಾಗಿ ಒರಗಿಕೊಂಡಿರುವ ಇಸ್ರಯೇಲರಲ್ಲಿ ಕೆಲವೇ ಕೆಲವರು ಮಾತ್ರ ಉಳಿಯುವರು.</verse>
				<verse number="13">ಈಗ ಕೇಳಿ, ಯಕೋಬನ ವಂಶದವರಿಗೆ ಎಚ್ಚರಿಕೆ ನೀಡಿ:</verse>
				<verse number="14">ಇಸ್ರಯೇಲರ ಪಾಪಕೃತ್ಯಗಳಿಗಾಗಿ ಅವರನ್ನು ದಂಡಿಸುವೆನು. ಬೇತೇಲಿನ ಯಜ್ಞವೇದಿಗಳನ್ನು ಚೂರುಚೂರು ಮಾಡುವೆನು. ಆ ಯಜ್ಞವೇದಿಯ ಮೂಲೆಕೊಂಬುಗಳನ್ನು ಕತ್ತರಿಸಿ ಬೀದಿಪಾಲಾಗಿಸುವೆನು.</verse>
				<verse number="15">ಚಳಿಗಾಲ, ಬೇಸಿಗೆಕಾಲಗಳ ವಿಹಾರಗೃಹಗಳನ್ನು ವಿನಾಶಮಾಡುವೆನು. ದಂತನಿರ್ಮಿತ ಮಂದಿರಗಳು ಧ್ವಂಸವಾಗುವುವು. ಮಹಾಸೌಧಗಳು ನೆಲಸಮವಾಗುವುವು. ಸರ್ವೇಶ್ವರಸ್ವಾಮಿಯ ನುಡಿಯಿದು.”</verse>
			</chapter>
			<chapter number="4">
				<verse number="1">ಸಮಾರ್ಯದ ಗುಡ್ಡಗಳ ಮೇಲೆ ಮೇದು, ಬಾಷಾನಿನ ಕೊಬ್ಬಿನ ಕಾಮಧೇನುಗಳಂತಿರುವ ಮಹಿಳೆಯರೇ, ಕೇಳಿ: ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಶೋಷಿಸಿ, ನಿಮ್ಮ ಪತಿರಾಯರಿಗೆ, “ಮದ್ಯ ತರಿಸಿರಿ, ಕುಡಿಯೋಣ” ಎಂದು ಹೇಳುವವರೇ, ಇದನ್ನು ಕೇಳಿ:</verse>
				<verse number="2">“ದಿನಗಳು ಬರುವುವು. ಆಗ ನಿಮ್ಮನ್ನು ಕೊಂಡಿಗಳಿಂದ ಎಳೆದುಕೊಂಡು ಹೋಗುವರು; ನಿಮ್ಮಲ್ಲಿ ಅಳಿದುಳಿದವರನ್ನು ಗಾಳಕ್ಕೆ ಸಿಕ್ಕಿದ ಮೀನಿನಂತೆ ಸೆಳೆದೊಯ್ಯುವರು.” ಒಡೆಯರಾದ ದೇವರು ಇದನ್ನು ಆಣೆಯಿಟ್ಟು ನುಡಿದಿದ್ದಾರೆ.</verse>
				<verse number="3">“ನೀವು ಎಲ್ಲರು ಇದ್ದಕ್ಕಿದ್ದಂತೆ ಒಬ್ಬರ ಹಿಂದೆ ಒಬ್ಬರು ಗೋಡೆಯ ಬಿರುಕುಗಳ ಮೂಲಕ ಹೆರ್ಮೋನ್ ಕಡೆಗೆ ತಳ್ಳಲ್ಪಡುವಿರಿ,” ಇದು ಸರ್ವೇಶ್ವರಸ್ವಾಮಿಯ ನುಡಿ.</verse>
				<verse number="4">ಸ್ವಾಮಿ ಸರ್ವೇಶ್ವರ ಇಂತೆನ್ನುತ್ತಾರೆ: “ಇಸ್ರಯೇಲಿನ ಜನರೇ, ಪಾಪ ಮಾಡಬೇಕಾದರೆ, ಬೇತೇಲಿಗೆ ಹೋಗಿ ಪಾಪಮಾಡಿರಿ. ಗಿಲ್ಗಾಲಿಗೆ ಹೋಗಿ ಯಥೇಚ್ಛವಾಗಿ ದ್ರೋಹಮಾಡಿರಿ. ಪ್ರತಿದಿನವೂ ಪ್ರಾತಃಕಾಲದ ಬಲಿಗಳನ್ನು ಅರ್ಪಿಸಿರಿ. ಮೂರು ದಿನಗಳಿಗೊಮ್ಮೆ ದಶಮಾಂಶವನ್ನು ಸಲ್ಲಿಸಿರಿ.</verse>
				<verse number="5">ಹುಳಿಹಿಟ್ಟಿನ ರೊಟ್ಟಿಯನ್ನು ಹೋಮಮಾಡಿ ಉಪಕಾರಸ್ಮರಣೆ ಮಾಡಿಕೊಳ್ಳಿ. ಇಷ್ಟಬಂದಂತೆ ಕಾಣಿಕೆಗಳನ್ನು ಸಮರ್ಪಿಸಿ ಪ್ರಚಾರಮಾಡಿಕೊಳ್ಳಿ. ಹೀಗೆ ಮಾಡುವುದು ನಿಮಗೆ ಇಷ್ಟವಲ್ಲವೆ?” ಇದು ಸರ್ವೇಶ್ವರಸ್ವಾಮಿಯ ನುಡಿ.</verse>
				<verse number="6">“ನಿಮ್ಮ ಪಟ್ಟಣಗಳಲ್ಲಿ ಹೊಟ್ಟೆಗೆ ಹಿಟ್ಟಿಲ್ಲದಂತೆ ಮಾಡಿದವನು ನಾನೇ. ನೀವು ಹೋದೆಡೆಗಳಲ್ಲೆಲ್ಲ ನಿಮಗೆ ರೊಟ್ಟಿ ಸಿಗದಂತೆ ಮಾಡಿದವನು ನಾನೇ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ.” ಇದು ಸರ್ವೇಶ್ವರಸ್ವಾಮಿಯ ನುಡಿ</verse>
				<verse number="7">“ಸುಗ್ಗಿಗೆ ಮೂರು ತಿಂಗಳಿರುವಾಗಲೂ ಮಳೆಯನ್ನು ತಡೆದವನು ನಾನೇ. ಒಂದೂರಿಗೆ ಮಳೆಯಾಗುವಂತೆಯೂ ಮತ್ತೊಂದೂರಿಗೆ ಮಳೆಯಾಗದಂತೆಯೂ ಮಾಡಿದವನು ನಾನೇ. ಒಂದು ಹೊಲಕ್ಕೆ ಮಳೆಯಾಗುವಂತೆ, ಮತ್ತೊಂದು ಹೊಲ ಮಳೆಯಿಲ್ಲದೆ ಬಾಡಿಹೋಗುವಂತೆ ಮಾಡಿದವನು ನಾನೇ.</verse>
				<verse number="8">ಹಲವಾರು ಊರಿನವರು ಕುಡಿಯುವ ನೀರಿಗಾಗಿ ಪರದಾಡುತ್ತಾ ಪಕ್ಕದ ಪಟ್ಟಣಕ್ಕೆ ಹೋದರೂ ಅವರ ದಾಹವು ಇಂಗಲಿಲ್ಲ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.</verse>
				<verse number="9">“ಬಿಸಿಗಾಳಿಯನ್ನು ಕಳುಹಿಸಿ ನಿಮ್ಮ ಪೈರು ಒಣಗುವಂತೆ ಮಾಡಿದೆ. ನಿಮ್ಮ ಬೆಳೆ ಬೂಷ್ಟು ಹಿಡಿದು ನಾಶವಾಗುವಂತೆ ಮಾಡಿದೆ. ನಿಮ್ಮ ವನವೃಕ್ಷಗಳನ್ನೂ ದ್ರಾಕ್ಷಾತೋಟಗಳನ್ನೂ ಹಾಳುಮಾಡಿದೆ. ನಿಮ್ಮ ಅಂಜೂರದ ಗಿಡಗಳನ್ನೂ ಎಣ್ಣೆಮರಗಳನ್ನೂ ಮಿಡತೆಗಳು ತಿಂದುಬಿಡುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ.</verse>
				<verse number="10">“ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಯುವಜನರು ಖಡ್ಗಕ್ಕೆ ತುತ್ತಾಗುವಂತೆ ಮಾಡಿದೆ. ನಿಮ್ಮ ಕುದುರೆಗಳು ಸೂರೆಯಾಗುವಂತೆ ಮಾಡಿದೆ. ನಿಮ್ಮ ದಂಡಿನವರ ಹೆಣಗಳು ಕೊಳೆತು ನಾರುವ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರಸ್ವಾಮಿ.</verse>
				<verse number="11">“ಒಮ್ಮೆ ಸೊದೋಮ್ ಮತ್ತು ಗೊಮೋರಾ ಪಟ್ಟಣಗಳನ್ನು ಕೆಡವಿದಂತೆ ನಾನು ನಿಮ್ಮ ಪಟ್ಟಣಪಾಳೆಯಗಳನ್ನು ಕೆಡವಿದೆನು, ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಂತೆ ನೀವು ಇದ್ದೀರಿ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.</verse>
				<verse number="12">ಆದುದರಿಂದ ಇಸ್ರಯೇಲಿನ ಜನರೇ, ನಿಮ್ಮನ್ನು ದಂಡಿಸಿಯೇ ತೀರುವೆನು. ಓ ಇಸ್ರಯೇಲರೇ, ನ್ಯಾಯತೀರ್ಪನ್ನು ಕೊಡಲು ಬರಲಿರುವ ನಿಮ್ಮ ದೇವರನ್ನು ಎದುರಗೊಳ್ಳಲು ಸಿದ್ಧಮಾಡಿಕೊಳ್ಳಿ:</verse>
				<verse number="13">ಬೆಟ್ಟಗುಡ್ಡಗಳನ್ನು ರೂಪಿಸಿದಾತ ದೇವನೇ ಗಾಳಿಬಿರುಗಾಳಿಯನು ಸೃಜಿಸಿದಾತ ಆತನೇ ತನ್ನಾಲೋಚನೆಯನ್ನು ನರರಿಗರುಹಿಸಿದವ ದೇವನೇ ಹಗಲನ್ನು ಇರುಳನ್ನಾಗಿಸುವವನು ಆತನೇ ಪೊಡವಿಯ ಉನ್ನತ ಸ್ಥಾನದಲ್ಲಿ ನಡೆದಾಡುವವನಾತನೇ ಆತನ ನಾಮಧೇಯ - ಸೇನಾಧೀಶ್ವರ ದೇವರಾದ ಸರ್ವೇಶ್ವರನೇ.</verse>
			</chapter>
			<chapter number="5">
				<verse number="1">ಇಸ್ರಯೇಲಿನ ಜನರೇ, ನಿಮ್ಮನ್ನು ಕುರಿತು ನಾನು ಹಾಡುವ ಈ ಶೋಕಗೀತೆಯನ್ನು ಕೇಳಿ:</verse>
				<verse number="2">“ಕನ್ಯೆ ಇಸ್ರಯೇಲಳು ಬಿದ್ದಿಹಳು ಕೆಳಗೆ ಅಶಕ್ತಳು ಆಕೆ ಮರಳಿ ಏಳಲು ಮೇಲಕೆ ದಿಕ್ಕಿಲ್ಲದೆ ಒರಗಿಹಳು ಧರೆಯ ಮೇಲೆ ಮೇಲೆತ್ತಲು ಯಾರೂ ಗತಿಯಿಲ್ಲದ ಅಬಲೆ.”</verse>
				<verse number="3">ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಯುದ್ಧಕ್ಕೆ ಹೊರಟ ಸಾವಿರ ಮಂದಿ ಸೈನಿಕರಲ್ಲಿ ಪಟ್ಟಣಕ್ಕೆ ಮರಳಿದವರು ನೂರೇ ಮಂದಿ: ರಣರಂಗಕ್ಕೆ ಹೊರಟ ನೂರು ಮಂದಿ ಯೋಧರಲ್ಲಿ ಇಸ್ರಯೇಲಿಗೆ ಮರಳಿದವರು ಹತ್ತೇ ಮಂದಿ.”</verse>
				<verse number="4">ಇಸ್ರಯೇಲ್ ಮನೆತನಕ್ಕೆ ಸರ್ವೇಶ್ವರ ಹೇಳುವುದೇನೆಂದರೆ: “ನನ್ನನ್ನು ಅರಸಿರಿ, ನೀವು ಬದುಕುವಿರಿ.</verse>
				<verse number="5">ಬೇತೇಲಿಗೆ ಹೋಗಬೇಡಿ, ಗಿಲ್ಗಾಲಿಗೆ ಸೇರಬೇಡಿ. ಬೆರ್ಷೆಬಾಗೆ ಯಾತ್ರೆ ಹೋಗಬೇಡಿ. ಗಿಲ್ಗಾಲ್ ಗಡೀಪಾರಾಗುವುದು. ಬೇತೇಲ್ ಬಯಲಾಗುವುದು.”</verse>
				<verse number="6">ಸರ್ವೇಶ್ವರಸ್ವಾಮಿಗೆ ಅಭಿಮುಖರಾಗಿರಿ, ನೀವು ಬದುಕುವಿರಿ. ಇಲ್ಲವಾದರೆ ಅವರು ಬೆಂಕಿಯೋಪಾದಿ ಜೋಸೆಫನ ಮನೆತನದ ಮೇಲೆ ಎರಗಿಯಾರು. ಬೇತೇಲಿನ ಜನರನ್ನು ಭಸ್ಮಮಾಡಿಯಾರು. ಆ ಬೆಂಕಿಯನ್ನು ಯಾರೂ ಆರಿಸರು.</verse>
				<verse number="7">ನ್ಯಾಯವನ್ನು ಕಹಿಯಾಗಿಸುವವರೇ, ಧರ್ಮವನ್ನು ಕಸವಾಗಿಸುವವರೇ, ನಿಮಗೆ ಧಿಕ್ಕಾರ!</verse>
				<verse number="8">ಕೃತ್ತಿಕೆ, ಮೃಗಶಿರ, ನಕ್ಷತ್ರಪುಂಜಗಳನು ಸೃಜಿಸಿದಾತನು ಕತ್ತಲನು ಬೆಳಕಾಗಿ, ಹಗಲನು ಇರುಳಾಗಿ ಮಾಡುವವನು, ಕಡಲಿನ ಜಲವನು ಮೇಲೆತ್ತಿ, ಧರೆಗೆ ಮಳೆಗರೆವಾತನು,</verse>
				<verse number="9">ಬಲಾಢ್ಯರನ್ನು ತಟ್ಟನೆ ಬಡಿದು ಕೋಟೆಗಳ ಕೆಡವುವಾತನು ಆತನೇ, ಸರ್ವೇಶ್ವರಸ್ವಾಮಿ ಎಂಬುದೇ ಆತನ ನಾಮಧೇಯ.</verse>
				<verse number="10">ಕಂಡ ದೋಷವನ್ನು ಮಂಟಪದಲ್ಲಿ ಖಂಡಿಸುವವನನ್ನು ನೀವು ಹಗೆಮಾಡುತ್ತೀರಿ; ನ್ಯಾಯವಾದಿಗಳ ಮೇಲೆ ದ್ವೇಷ ಸಾಧಿಸುತ್ತೀರಿ.</verse>
				<verse number="11">ಬಡಬಗ್ಗರನ್ನು ತುಳಿಯುತ್ತೀರಿ; ಅವರ ದವಸಧಾನ್ಯಗಳನ್ನು ಕಸಿದುಕೊಳ್ಳುತ್ತೀರಿ. ಆದ್ದರಿಂದ ನೀವು ಕಟ್ಟಿರುವ ಕೆತ್ತನೆಯ ಕಲ್ಲುಮನೆಗಳಲ್ಲಿ ವಾಸಮಾಡಲಾರಿರಿ. ನೀವು ನೆಟ್ಟಿರುವ ಫಲಭರಿತ ದ್ರಾಕ್ಷಾಬಳ್ಳಿಗಳಿಂದ ರಸವನ್ನು ಕುಡಿಯಲಾರಿರಿ.</verse>
				<verse number="12">ಸಜ್ಜನರನ್ನು ಹಿಂಸಿಸಿ, ಲಂಚಕ್ಕೆ ಕೈ ಒಡ್ಡುವವರೇ, ನ್ಯಾಯಮಂಟಪದಲ್ಲಿ ಬಡವರಿಗೆ ನ್ಯಾಯದೊರಕಿಸದಿರುವವರೇ, ನಿಮ್ಮ ಪಾಪಗಳು ಅಪಾರ! ನಿಮ್ಮ ದ್ರೋಹಗಳು ಬಹಳ! ಇದು ನನಗೆ ಗೊತ್ತು.</verse>
				<verse number="13">ಕಾಲವು ಕೆಟ್ಟದ್ದಾಗಿ ಇರುವುದರಿಂದ ವಿವೇಕಿಯಾದವನು ಸುಮ್ಮನಿರುವುದು ಲೇಸು.</verse>
				<verse number="14">ಕೆಟ್ಟದ್ದನ್ನು ಬಿಟ್ಟುಬಿಡಿ. ಒಳ್ಳೆಯದನ್ನು ಆಸಕ್ತಿಯಿಂದ ಮಾಡಿ; ನೀವು ಬಾಳುವಿರಿ. ಆಗ ನೀವು ಹೇಳಿಕೊಳ್ಳುವಂತೆ, ಸೇನಾಧೀಶ್ವರ ದೇವರಾದ ಸರ್ವೇಶ್ವರ ನಿಮ್ಮೊಡನೆ ಇರುವರು.</verse>
				<verse number="15">ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ. ನ್ಯಾಯಮಂಟಪದಲ್ಲಿ ಸತ್ಯಕ್ಕೆ ಜಯವಾಗುವಂತೆ ನೋಡಿಕೊಳ್ಳಿರಿ. ಆಗ ಬಹುಶಃ ಸೇನಾಧೀಶ್ವರ ದೇವರಾದ ಸರ್ವೇಶ್ವರ ಅಳಿದುಳಿದ ಜೋಸೆಫನ ವಂಶಕ್ಕೆ ಕರುಣೆ ತೋರಿಯಾರು.</verse>
				<verse number="16">ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಇಂತೆನ್ನುತ್ತಾರೆ: “ಬೀದಿ ಚೌಕಗಳಲ್ಲೆಲ್ಲ ಗೋಳಾಟ ಇರುವುದು. ಹಾದಿಬೀದಿಗಳಲ್ಲೆಲ್ಲ ‘ಅಯ್ಯಯ್ಯೋ’ ಎಂದು ಜನರು ಪ್ರಲಾಪಿಸುವರು. ರೈತರನ್ನು ಕಣ್ಣೀರಿಡುವುದಕ್ಕೂ ಶೋಕವೃತ್ತಿಯವರನ್ನು ಗೋಳಾಡುವುದಕ್ಕೂ ಕರೆಯಲಾಗುವುದು.</verse>
				<verse number="17">ಪ್ರತಿಯೊಂದು ದ್ರಾಕ್ಷಾತೋಟದಲ್ಲಿ ಜನರು ರೋದಿಸುವರು. ಏಕೆಂದರೆ ನಿಮ್ಮನ್ನು ದಂಡಿಸಲು ನಿಮ್ಮ ಮಧ್ಯೆ ಹಾದುಹೋಗಲಿದ್ದೇನೆ, ಇದು ಸರ್ವೇಶ್ವರಸ್ವಾಮಿಯ ನುಡಿ.”</verse>
				<verse number="18">ಸ್ವಾಮಿಯ ಆ ದಿನಕ್ಕಾಗಿ ಕಾತುರದಿಂದ ಕಾದಿರುವರೇ, ಅಯ್ಯೋ ನಿಮಗೆ ಕೇಡು; ಆ ದಿನ ಏನಾಗುತ್ತದೆಂದು ನಿಮಗೆ ಗೊತ್ತೆ? ಸ್ವಾಮಿಯ ಆ ದಿನ ನಿಮಗೆ ಬೆಳಕಾಗಿರದು, ಕತ್ತಲೆಯ ದಿನವಾಗಿರುವುದು.</verse>
				<verse number="19">ಅದು ಹೇಗೆಂದರೆ: “ಸಿಂಹದ ಬಾಯಿಯಿಂದ ತಪ್ಪಿಸಿಕೊಂಡು ಓಡುತ್ತಿರುವವನು ಕರಡಿಯನ್ನು ಎದುರುಗೊಳ್ಳುವಂತೆ ಆಗುವುದು ಅಥವಾ ಅವನು ಅಲ್ಲಿಂದ ಮನೆಗೆ ಓಡಿಬಂದು ಗೋಡೆಯ ಮೇಲೆ ಕೈಯೂರಲು ಅವನಿಗೆ ಹಾವು ಕಚ್ಚಿದಂತೆ ಆಗುವುದು.</verse>
				<verse number="20">ಖಂಡಿತವಾಗಿ ಸ್ವಾಮಿಯ ದಿನ ಬೆಳಕಾಗಿರದು, ಕತ್ತಲೆಯಾಗಿರುತ್ತದೆ, ಒಂದು ಚುಕ್ಕೆಯೂ ಇಲ್ಲದ ಕಾರಿರುಳಂತಿರುತ್ತದೆ.</verse>
				<verse number="21">“ನಿಮ್ಮ ಹಬ್ಬಹುಣ್ಣಿಮೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ. ನಿಮ್ಮ ಉತ್ಸವಗಳ ವಾಸನೆಯೂ ನನಗೆ ಬೇಡ.</verse>
				<verse number="22">ನೀವು ನನಗೆ ದಹನಬಲಿದಾನಗಳನ್ನು, ಧಾನ್ಯನೈವೇದ್ಯಗಳನ್ನು ಅರ್ಪಿಸುವುದಕ್ಕೆ ಬಂದರೂ ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನಾನು ಕಟಾಕ್ಷಿಸೆನು.</verse>
				<verse number="23">ನಿಮ್ಮ ಭಜನೆ ನಿಂತುಹೋಗಲಿ; ನಿಮ್ಮ ವೀಣಾವಾದ್ಯಗಳು ತೊಲಗಲಿ.</verse>
				<verse number="24">ನ್ಯಾಯನೀತಿ ಹೊಳೆಯಂತೆ ಹರಿಯಲಿ; ಸದ್ಧರ್ಮ ಮಹಾನದಿಯಂತೆ ಪ್ರವಹಿಸಲಿ.</verse>
				<verse number="25">“ಇಸ್ರಯೇಲಿನ ವಂಶದವರೇ, ನಲವತ್ತು ವರ್ಷಗಳ ಕಾಲ ನೀವು ಮರಳುಗಾಡಿನಲ್ಲಿದ್ದಾಗ, ಬಲಿಪ್ರಾಣಿಗಳನ್ನಾಗಲೀ, ಧಾನ್ಯನೈವೇದ್ಯಗಳನ್ನಾಗಲಿ ನೀವು ಅರ್ಪಿಸಬೇಕೆಂದು ನಾನು ಕೇಳಿದ್ದುಂಟೋ?</verse>
				<verse number="26">ಆದರೆ ಈಗ ನೀವು ನಿರ್ಮಿಸಿಕೊಂಡಿರುವ ಮೂರ್ತಿಗಳಾದ ಸಿಕ್ಕುತ್ ರಾಜೇಶ್ವರನನ್ನೂ ಕಿಯೂನ್ ಎಂಬ ನಕ್ಷತ್ರ ದೇವತೆಯನ್ನೂ ನೀವೇ ಹೊತ್ತುಕೊಂಡು ಹೋಗಬೇಕಾಗುವುದು.</verse>
				<verse number="27">ಏಕೆಂದರೆ ನಾನು ನಿಮ್ಮನ್ನು ದಮಸ್ಕದಿಂದ ಆಚೆ ತಳ್ಳಿ, ಸೆರೆಯಾಳುಗಳನ್ನಾಗಿ ಕಳುಹಿಸುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.</verse>
			</chapter>
			<chapter number="6">
				<verse number="1">ಇಸ್ರಯೇಲಿನ ಜನರು ನಿಮ್ಮ ಸಹಾಯ ಕೋರಿ ನಿಮ್ಮನ್ನು ಹುಡುಕಿಕೊಂಡು ಬರುವಷ್ಟು ಪ್ರತಿಭಾವಂತರಾಗಿರುವವರೇ, ನಿಮಗೆ ಧಿಕ್ಕಾರ!</verse>
				<verse number="2">ಕಲ್ನೆ ಪಟ್ಟಣಕ್ಕೆ ಹೋಗಿ ನೋಡಿ. ಅಲ್ಲಿಂದ ಪ್ರಖ್ಯಾತ ಪಟ್ಟಣವಾದ ಹಮಾತಿಗೆ ನಡೆಯಿರಿ. ಹಮಾತಿನಿಂದ ಫಿಲಿಷ್ಟಿಯರ ಊರಾದ ಗತ್ ನಗರಕ್ಕೆ ಇಳಿದುಹೋಗಿರಿ. ಅವು ನಿಮ್ಮ ರಾಜ್ಯಗಳಿಗಿಂತ ದೊಡ್ಡವೋ? ಅವುಗಳ ಪ್ರಾಂತ್ಯ, ನಿಮ್ಮ ಪ್ರಾಂತ್ಯಕ್ಕಿಂತ ಹಿರಿದೋ?</verse>
				<verse number="3">ಆ ದುರ್ದಿನದಿಂದ ತಪ್ಪಿಸಿಕೊಳ್ಳಲು ಯತ್ನಿಸುವ ಮುಖಂಡರೇ, ಮತ್ತಷ್ಟು ಶೀಘ್ರವಾಗಿ ಹಿಂಸಾಕ್ರಮಣವನ್ನು ಬರಮಾಡಿಕೊಳ್ಳುತ್ತೀರಿ.</verse>
				<verse number="4">ದಂತದ ಮಂಚಗಳ ಮೇಲೆ ಮಲಗುವ ಜನರೇ, ನಿಮಗೆ ಧಿಕ್ಕಾರ! ಸುಖಾಸನಗಳಲ್ಲೂ ಸುಪ್ಪತ್ತಿಗೆಯ ಮೇಲೂ ಹಾಯಾಗಿ ಒರಗಿಕೊಂಡಿರುವವರೇ, ನಿಮಗೆ ಧಿಕ್ಕಾರ! ಮಂದೆಯ ಕುರಿಮರಿಗಳನ್ನು, ಕೊಟ್ಟಿಗೆಯ ಕರುಗಳನ್ನು ಕೊಂದು ತಿನ್ನುವವರೇ, ನಿಮಗೆ ಧಿಕ್ಕಾರ!</verse>
				<verse number="5">ವೀಣೆಯನ್ನು ನುಡಿಸುತ್ತಾ ಮನಸ್ಸು ಬಂದಂತೆ ಹಾಡುವವರೇ, ದಾವೀದನಂತೆ ಹೊಸ ವಾದ್ಯಸಂಗೀತಗಳನ್ನು ರಚಿಸುವವರೇ, ನಿಮಗೆ ಧಿಕ್ಕಾರ!</verse>
				<verse number="6">ಬೋಗುಣಿಬಟ್ಟಲುಗಳಲ್ಲಿ ದ್ರಾಕ್ಷಾರಸವನ್ನು ಕುಡಿಯುವವರೇ, ಅತ್ಯುತ್ತಮ ಸುಗಂಧತೈಲಗಳನ್ನು ಲೇಪಿಸಿಕೊಳ್ಳುವವರೇ, ನಿಮಗೆ ಧಿಕ್ಕಾರ! ಏಕೆಂದರೆ ನೀವು ಜೋಸೆಫನ ವಂಶದವರ ವಿನಾಶದ ಬಗ್ಗೆ ನಿಶ್ಚಿಂತರಾಗಿದ್ದೀರಿ.</verse>
				<verse number="7">ಆದುದರಿಂದ ಗಡೀಪಾರಾಗುವವರಲ್ಲಿ ನೀವೇ ಮೊದಲಿಗರಾಗುವಿರಿ. ಆಗ ನಿಮ್ಮ ಸುಖಾಸನಗಳು ಮತ್ತು ಆಮೋದ ಪ್ರಮೋದಗಳು ಗತಿಸಿಹೋಗುವುವು.</verse>
				<verse number="8">ಸೇನಾಧೀಶ್ವರ ದೇವರಾದ ಸರ್ವೇಶ್ವರಸ್ವಾಮಿ ಪ್ರಮಾಣಮಾಡಿ ಹೇಳಿದ್ದೇನೆಂದರೆ: “ಯಕೋಬ ವಂಶದವರ ಉದ್ಧಟತನವನ್ನು ದ್ವೇಷಿಸುತ್ತೇನೆ. ಅವರ ಮೋಜಿನ ಮಹಲುಗಳನ್ನು ತೃಣೀಕರಿಸುತ್ತೇನೆ. ಅವರ ರಾಜಧಾನಿಯನ್ನೂ ಅದರಲ್ಲಿರುವುದೆಲ್ಲವನ್ನೂ ಶತ್ರುವಶಕ್ಕೆ ಒಪ್ಪಿಸುತ್ತೇನೆ.”</verse>
				<verse number="9">ಮನೆಯೊಂದರಲ್ಲಿ ಹತ್ತುಮಂದಿ ಉಳಿದಿದ್ದರೂ ಅವರೆಲ್ಲರೂ ಸಾಯುವರು.</verse>
				<verse number="10">ಶವವನ್ನು ಸುಡಲು ಬಂದ ಸಂಬಂಧಿಕರು ಹೆಣವನ್ನು ಮನೆಯೊಳಗಿಂದ ತೆಗೆದುಕೊಂಡು ಹೋದಾಗ, “ನಿಮ್ಮಲ್ಲಿ ಯಾರಾದರೂ ಉಳಿದಿದ್ದಾರೋ?” ಎಂದು ಒಳಮನೆಯಲ್ಲಿ ಇರುವವನನ್ನು ಕೇಳಿದರೆ, ಅವನು “ಇಲ್ಲ” ಎನ್ನುವನು. ಆಗ ಆ ಸಂಬಂಧಿಕನು, “ಮೌನದಿಂದಿರು! ಸರ್ವೇಶ್ವರಸ್ವಾಮಿಯ ಹೆಸರನ್ನೂ ಎತ್ತಕೂಡದು” ಎಂದು ಎಚ್ಚರಿಸುವನು.</verse>
				<verse number="11">ಇಗೋ, ಸರ್ವೇಶ್ವರ ಆಜ್ಞಾಪಿಸಲು, ಕುಸಿದುಬೀಳುವುವು ಮಹಾಸೌಧಗಳು, ನುಚ್ಚುನೂರಾಗುವುವು ಚಿಕ್ಕಚಿಕ್ಕ ಮನೆಗಳು.</verse>
				<verse number="12">ಕಲ್ಲುಬಂಡೆಗಳ ಮೇಲೆ ಕುದುರೆಗಳು ಓಡಾಡುವುದುಂಟೋ? ಎತ್ತು ಹೋರಿಗಳಿಂದ ಕಡಲನ್ನು ಉಳುವುದುಂಟೋ? ನೀವೋ, ವಿಷವನ್ನಾಗಿಸಿದ್ದೀರಿ ನ್ಯಾಯನೀತಿಯನ್ನು, ಕಹಿಯಾಗಿಸಿದ್ದೀರಿ ಧರ್ಮದ ಸತ್ಫಲವನ್ನು.</verse>
				<verse number="13">ನೀವು ಹೆಚ್ಚಳಪಡುವುದು ‘ಲೊದೆಬಾರಿನ’ ಗೆಲುವಿನಲ್ಲಿ! ಸ್ವಬಲದಿಂದಲೇ ಕರ್ನಾಯಿಮನ್ನು ಜಯಿಸಿದ್ದೇವೆಂದು ಕೊಚ್ಚಿಕೊಳ್ಳುವುದರಲ್ಲಿ!</verse>
				<verse number="14">ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ: “ಎತ್ತಿಕಟ್ಟುವೆನು ನಿಮಗೆ ವಿರುದ್ಧವಾಗಿ ಜನಾಂಗವೊಂದನ್ನು; ಸದೆಬಡಿವುದದು ನಿಮ್ಮನ್ನು ಹಮಾತಿನ ದಾರಿಯಿಂದ ಅರಬಾ ತೊರೆಯ ತನಕ.”</verse>
			</chapter>
			<chapter number="7">
				<verse number="1">ಒಡೆಯರಾದ ಸರ್ವೇಶ್ವರ ನನಗೆ ತೋರಿಸಿದ ದರ್ಶನ ಇದು: ಹಿಂಗಾರು ಮಳೆ ಬಿದ್ದಿತ್ತು. ಪೈರು ಸೊಂಪಾಗಿ ಬೆಳೆಯಲು ಆರಂಭಿಸಿತ್ತು. ಈಗಾಗಲೇ ರಾಜಾದಾಯದ ಹುಲ್ಲಿನ ಕೊಯಿಲು ಮುಗಿದು ಮತ್ತೆ ಹುಲ್ಲು ಬೆಳೆಯುತ್ತಿತ್ತು. ಆಗ ಸರ್ವೇಶ್ವರ ಮಿಡತೆಗಳ ಗುಂಪೊಂದನ್ನು ಹೊರಡಿಸಿದರು.</verse>
				<verse number="2">ಮಿಡತೆಗಳು ನಾಡಿನ ಪೈರು ಪಚ್ಚೆಯನ್ನೆಲ್ಲ ತಿಂದುಬಿಟ್ಟವು. ಆಮೇಲೆ ನಾನು ಪ್ರಭುವಿಗೆ ಹೀಗೆಂದು ಮೊರೆಯಿಟ್ಟೆ: “ಒಡೆಯರಾದ ಸರ್ವೇಶ್ವರಾ, ನಮ್ಮನ್ನು ಆಲಿಸಿ, ಕ್ಷಮಿಸಿರಿ; ಅತಿ ಚಿಕ್ಕದಾದ ಯಕೋಬ ಜನಾಂಗ ಈ ಪಿಡುಗಿನಿಂದ ಉಳಿಯುವುದುಂಟೆ?”</verse>
				<verse number="3">ಇದನ್ನು ಕೇಳಿ ಸರ್ವೇಶ್ವರ ಮನಮರುಗಿದರು. “ಈ ದರ್ಶನ ನೆರವೇರುವುದಿಲ್ಲ” ಎಂದು ಅಭಯವಿತ್ತರು.</verse>
				<verse number="4">ಒಡೆಯರಾದ ಸರ್ವೇಶ್ವರ ನನಗೆ ಇನ್ನೊಂದು ದರ್ಶನವನ್ನು ತೋರಿಸಿದರು. ಅವರು ತನ್ನ ಜನರನ್ನು ದಂಡಿಸುವುದಕ್ಕಾಗಿ ಬೆಂಕಿಯನ್ನು ಬರಮಾಡಿದರು. ಅದು ಆಳವಾದ ಮಹಾಸಾಗರವನ್ನೂ ಇಡೀ ನಾಡನ್ನೂ ಕಬಳಿಸುವುದರಲ್ಲಿತ್ತು.</verse>
				<verse number="5">ಆಗ ನಾನು ಆ ಸ್ವಾಮಿಗೆ: “ಆಲಿಸಿ, ಈ ಪಿಡುಗನ್ನು ತಪ್ಪಿಸಿ, ಅತಿ ಚಿಕ್ಕದಾದ ಯಕೋಬ ಜನಾಂಗ ಮುಂದೆ ಹೇಗೆ ಉಳಿದೀತು” ಎಂದು ಮೊರೆಯಿಟ್ಟೆ.</verse>
				<verse number="6">ಒಡೆಯರಾದ ಸರ್ವೇಶ್ವರ ಇದನ್ನು ಕೇಳಿ ಮನಮರುಗಿ: “ಈ ದರ್ಶನ ನೆರವೇರುವುದಿಲ್ಲ” ಎಂದು ಅಭಯವಿತ್ತರು.</verse>
				<verse number="7">ಆ ಸ್ವಾಮಿಯಿಂದ ನನಗೆ ಮತ್ತೊಂದು ದರ್ಶನವಾಯಿತು. ಸ್ವಾಮಿ ನೂಲು ಮಟ್ಟದ ಗೋಡೆಯ ಮೇಲೆ ನಿಂತಿದ್ದರು. ಅವರ ಕೈಯಲ್ಲಿ ನೂಲುಗುಂಡೊಂದು ಇತ್ತು.</verse>
				<verse number="8">ಅವರು ನನಗೆ: “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಿದರು. ನಾನು “ಒಂದು ನೂಲುಗುಂಡು,” ಎಂದು ಉತ್ತರಕೊಟ್ಟೆ. ಆಗ ಸ್ವಾಮಿ, “ಇಗೋ,ನನ್ನ ಜನರಾದ ಇಸ್ರಯೇಲಿನ ಮಧ್ಯೆ ನೂಲುಗುಂಡನ್ನು ಹಿಡಿದು ಅವರ ನಡತೆ-ಗೋಡೆ ನೆಟ್ಟಗಿಲ್ಲವೆಂದು ತೋರಿಸುವೆನು. ಅವರನ್ನು ಕಂಡೂ ಕಾಣದಂತಿರದೆ, ದಂಡಿಸಿಯೇ ತೀರುವೆನು.</verse>
				<verse number="9">ಇಸಾಕನ ವಂಶದವರ ಎತ್ತರವಾದ ಪೂಜಾಮಂದಿರಗಳು ನೆಲಸಮವಾಗುವುವು. ಇಸ್ರಯೇಲಿನ ಪವಿತ್ರಾಲಯಗಳು ಪಾಳುಬೀಳುವುವು. ಯಾರೊಬ್ಬಾಮನ ಮನೆತನ ಕತ್ತಿಗೆ ತುತ್ತಾಗುವುದು,” ಎಂದರು.</verse>
				<verse number="10">ತರುವಾಯ ಬೇತೇಲಿನ ಯಾಜಕನಾದ ಅಮಚ್ಯನು ಇಸ್ರಯೇಲಿನ ಅರಸ ಯಾರೊಬ್ಬಾಮನಿಗೆ ಹೀಗೆ ಹೇಳಿಕಳುಹಿಸಿದನು: “ಆಮೋಸನು ನಿನಗೆ ವಿರುದ್ಧವಾಗಿ ಇಸ್ರಯೇಲರಲ್ಲಿ ಒಳಸಂಚು ಹೂಡಿದ್ದಾನೆ. ಅವನ ಮಾತುಗಳನ್ನು ನಾಡು ಸಹಿಸಲಾರದು.</verse>
				<verse number="11">ಏಕೆಂದರೆ, “ಯಾರೊಬ್ಬಾಮನು ಖಡ್ಗದಿಂದ ಹತನಾಗುವನು. ಇಸ್ರಯೇಲ್ ಸ್ವಂತ ನಾಡಿನಿಂದ ಪರದೇಶಕ್ಕೆ ಒಯ್ಯಲ್ಪಡುವುದು ಖಂಡಿತ ಎಂದು ಅವನು ನುಡಿದಿದ್ದಾನೆ.”</verse>
				<verse number="12">ಆ ಬಳಿಕ ಅಮಚ್ಯನು ಆಮೋಸನಿಗೆ, “ಕಣಿಹೇಳುವವನೇ, ತೊಲಗು, ಜುದೇಯ ನಾಡಿಗೆ ಓಡಿಹೋಗು; ಅಲ್ಲಿ ಪ್ರವಾದನೆಮಾಡಿ ಹೊಟ್ಟೆ ಹೊರೆದುಕೊ.</verse>
				<verse number="13">ಬೇತೇಲಿನಲ್ಲಿ ಇನ್ನು ಪ್ರವಾದನೆ ಮಾಡಬೇಡ. ಇದು ರಾಜನ ಗರ್ಭಗುಡಿ, ರಾಜ್ಯದ ಪವಿತ್ರಾಲಯ,” ಎಂದನು.</verse>
				<verse number="14">ಅದಕ್ಕೆ ಆಮೋಸನು ಪ್ರತ್ಯುತ್ತರವಾಗಿ: “ನಾನು ಪ್ರವಾದಿಯಲ್ಲ, ಪ್ರವಾದಿಯ ಮಗನೂ ಅಲ್ಲ. ನಾನೊಬ್ಬ ಗೊಲ್ಲ, ಅತ್ತಿಹಣ್ಣನ್ನು ಕೀಳುವವನು.</verse>
				<verse number="15">ಮಂದೆ ಕಾಯುವುದರಿಂದ ಸರ್ವೇಶ್ವರ ನನ್ನನ್ನು ಬಿಡಿಸಿದರು. ನೀನು ಹೋಗಿ ನನ್ನ ಜನರಾದ ಇಸ್ರಯೇಲರಿಗೆ ಪ್ರವಾದನೆಮಾಡು’ ಎಂದು ಹೇಳಿಕಳುಹಿಸಿದರು.</verse>
				<verse number="16">“ಆದ್ದರಿಂದ ಆ ಸರ್ವೇಶ್ವರಸ್ವಾಮಿಯ ವಾಕ್ಯವನ್ನು ಗಮನಿಸು: ‘ಇಸ್ರಯೇಲಿಗೆ ವಿರುದ್ಧ ಪ್ರವಾದನೆ ಮಾಡಬೇಡ; ಇಸಾಕನ ಮನೆತನದ ವಿರುದ್ಧ ಮಾತೆತ್ತಬೇಡ; ಎಂದು ನೀನು ಹೇಳುತ್ತೀಯಲ್ಲವೆ?</verse>
				<verse number="17">ನೀನು ಹೀಗೆ ಹೇಳಿದ್ದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: ‘ನಿನ್ನ ಹೆಂಡತಿ ಈ ಪಟ್ಟಣದಲ್ಲಿ ವೇಶ್ಯೆಯಾಗುವಳು. ನಿನ್ನ ಪುತ್ರಪುತ್ರಿಯರು ಕತ್ತಿಗೆ ತುತ್ತಾಗುವರು. ನಿನ್ನ ನಾಡನ್ನು ಶತ್ರುಗಳು ವಶಪಡಿಸಿಕೊಂಡು ಹಂಚಿಕೊಳ್ಳುವರು. ನೀನು ಸಹ ಅಪವಿತ್ರವಾದ ನಾಡಿನಲ್ಲಿ ಸಾಯುವೆ. ಇಸ್ರಯೇಲರು ಖಂಡಿತವಾಗಿ ಸ್ವಂತ ನಾಡಿನಿಂದ ಪರದೇಶಕ್ಕೆ ಸೆರೆಯಾಗಿಹೋಗುವರು’,” ಎಂದು ಹೇಳಿದನು.</verse>
			</chapter>
			<chapter number="8">
				<verse number="1">ಒಡೆಯರಾದ ಸರ್ವೇಶ್ವರ ನನಗೆ ಈ ದರ್ಶನವನ್ನು ತೋರಿಸಿದರು: ಮಾಗಿದ ಹಣ್ಣಿನ ಬುಟ್ಟಿಯೊಂದು ಕಾಣಿಸಿತು.</verse>
				<verse number="2">ಅವರು ನನಗೆ: “ಆಮೋಸನೇ, ನಿನ್ನ ಕಣ್ಣಿಗೆ ಕಾಣಿಸುವುದೇನು?” ಎಂದು ಕೇಳಿದರು. “ಮಾಗಿದ ಹಣ್ಣಿನ ಒಂದು ಬುಟ್ಟಿ” ಎಂದು ಉತ್ತರಿಸಿದೆ. ಆಗ ಸರ್ವೇಶ್ವರ ನನಗೆ ಹೀಗೆಂದರು: “ಇಸ್ರಯೇಲರಾದ ನನ್ನ ಜನರಿಗೆ ಕಡೆಗಾಲ ಮಾಗುತ್ತಾ ಬಂದಿದೆ. ಇನ್ನು ಅವರನ್ನು ಕಂಡೂ ಕಾಣದಂತೆ ಇರಲಾರೆ. ಅವರನ್ನು ದಂಡಿಸಿಯೇ ತೀರುವೆನು.</verse>
				<verse number="3">ಆ ದಿನದಲ್ಲಿ ಆಸ್ಥಾನದ ಗೀತೆಗಳು ಶೋಕಗೀತೆಗಳಾಗಿ ಮಾರ್ಪಡುವುವು. ಹೆಣಗಳು ಎಲ್ಲೆಲ್ಲೂ ಬಿದ್ದಿರುವುವು. ಅವುಗಳನ್ನು ಸದ್ದುಗದ್ದಲವಿಲ್ಲದೆ ಬಿಸಾಡಲಾಗುವುದು.” ಇದು ಸರ್ವೇಶ್ವರಸ್ವಾಮಿಯ ನುಡಿ.</verse>
				<verse number="4">ದಿಕ್ಕಿಲ್ಲದವರನ್ನು ತುಳಿದುಬಿಡುವವರೇ, ನಾಡಿನ ಬಡವರನ್ನು ನಿರ್ಮೂಲ ಮಾಡುವವರೇ, ಕೇಳಿ,</verse>
				<verse number="5">“ದವಸಧಾನ್ಯಗಳನ್ನು ಮಾರಬೇಕಲ್ಲ, ಈ ಅಮಾವಾಸ್ಯೆ ತೀರುವುದು ಯಾವಾಗ? ಗೋದಿಯ ವ್ಯಾಪಾರ ಮಾಡಬೇಕಾಗಿದೆ. ಸಬ್ಬತ್ ದಿನ ಕಳೆಯುವುದು ಯಾವಾಗ? ಕೊಳಗವನ್ನು ಕಿರಿದು ಮಾಡೋಣ, ತೊಲವನ್ನು ಹಿರಿದು ಮಾಡೋಣ, ಕಳ್ಳತಕ್ಕಡಿಯನ್ನು ಬಳಸೋಣ;</verse>
				<verse number="6">ಬಡವರನ್ನು ಬೆಳ್ಳಿಗೆ, ದಿಕ್ಕಿಲ್ಲದವರನ್ನು ಒಂದು ಜೊತೆ ಕೆರಕ್ಕೆ ಕೊಂಡುಕೊಳ್ಳೋಣ; ಗೋದಿಯ ನುಚ್ಚುನುಸಿಯನ್ನೂ ಬಿಡದಂತೆ ಮಾರಿಬಿಡೋಣ,” ಎಂದುಕೊಳ್ಳುತ್ತೀರಿ, ಅಲ್ಲವೆ?</verse>
				<verse number="7">ಯಕೋಬನ ಮಹಿಮಾನ್ವಿತ ಸರ್ವೇಶ್ವರ ಆಣೆಯಿಟ್ಟು ಹೇಳುವುದೇನೆಂದರೆ: “ಖಂಡಿತವಾಗಿ ಅವರ ದುಷ್ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ನಾನು ಮರೆಯಲಾರೆ.</verse>
				<verse number="8">ಅವರ ದುಷ್ಕೃತ್ಯಗಳ ನಿಮಿತ್ತವೇ ನಾಡು ಕಂಪಿಸುವುದು; ನಿವಾಸಿಗಳೆಲ್ಲರು ದುಃಖಿಸುವರು. ನಾಡೆಲ್ಲವು ನೈಲ್ ನದಿಯಂತೆ ಉಬ್ಬುವುದು. ಅಲ್ಲೋಲಕಲ್ಲೋಲವಾಗಿ ಈಜಿಪ್ಟಿನ ನದಿಯಂತೆ ಕುಗ್ಗಿ ಕರಗಿಹೋಗುವುದು.</verse>
				<verse number="9">ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಂದು ನಡುಮಧ್ಯಾಹ್ನದಲ್ಲಿ ಸೂರ್ಯನನ್ನು ಮುಳುಗಿಸುವೆನು. ಹಾಡುಹಗಲಲ್ಲೇ ಭೂಮಿಯನ್ನು ಕತ್ತಲಾಗಿಸುವೆನು.</verse>
				<verse number="10">ನಿಮ್ಮ ಕೊಂಡಾಟದಿನಗಳನ್ನು ಗೋಳಾಟ ದಿನಗಳನ್ನಾಗಿ ಮಾರ್ಪಡಿಸುವೆನು. ನಿಮ್ಮ ಹರ್ಷಗೀತೆಗಳನ್ನು ಶೋಕಗೀತೆಗಳನ್ನಾಗಿ ಬದಲಾಯಿಸುವೆನು. ನೀವೆಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು, ತಲೆ ಬೋಳಿಸಿಕೊಳ್ಳುವಂತೆ ಮಾಡುವೆನು. ಏಕಮಾತ್ರ ಪುತ್ರನನ್ನು ಕಳೆದುಕೊಂಡವರಂತೆ ನೀವು ಅತ್ತು ಪ್ರಲಾಪಿಸುವಿರಿ. ಆ ದಿನವೆಲ್ಲಾ ನಿಮಗೆ ಕರಾಳ ದಿನವಾಗುವುದು.”</verse>
				<verse number="11">ಒಡೆಯರಾದ ಸರ್ವೇಶ್ವರ ಇಂತೆನ್ನುತ್ತಾರೆ: “ದಿನಗಳು ಬರಲಿವೆ. ಅಂದು ನಾಡಿನಲ್ಲಿ ಕ್ಷಾಮವನ್ನುಂಟುಮಾಡುವೆನು. ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವೂ ಅಲ್ಲ; ಸರ್ವೇಶ್ವರನ ಸಂದೇಶಕ್ಕಾಗಿ ಹಸಿದು ಹಂಬಲಿಸುವ ಕ್ಷಾಮ.</verse>
				<verse number="12">ಜನರು ಸಮುದ್ರದಿಂದ ಸಮುದ್ರದವರೆಗೆ ಉತ್ತರದಿಂದ ಪೂರ್ವದವರೆಗೆ ಅತ್ತಿತ್ತ ಹುಡುಕುತ್ತಾ ಬಳಲಿಹೋಗುವರು. ಆದರೂ ಅದು ಸಿಗದು.</verse>
				<verse number="13">ಆ ದಿನದಂದು ಗಟ್ಟಿಮುಟ್ಟಾದ ಯುವಕ ಯುವತಿಯರೂ ಬಾಯಾರಿಕೆಯಿಂದ ಮೂರ್ಛೆಹೋಗುವರು.</verse>
				<verse number="14">ದಾನೇ, ನಿನ್ನ ದೇವರ ಜೀವದಾಣೆ’ ಎಂದೂ, ‘ಬೇರ್ಷೆಬಾ ಯಾತ್ರೆಯ ಜೀವದಾಣೆ’ ಎಂದೂ ಸಮಾ‍ರ್ಯದ ವಿಗ್ರಹಗಳ ಮೇಲೆ ಪ್ರಮಾಣ ಮಾಡುವವರು ಮತ್ತೆ ಏಳದಂತೆ ಬಿದ್ದುಹೋಗುವರು.”</verse>
			</chapter>
			<chapter number="9">
				<verse number="1">ಆಗ ಸರ್ವೇಶ್ವರಸ್ವಾಮಿ ಬಲಿಪೀಠದ ಪಕ್ಕದಲ್ಲಿ ನಿಂತಿರುವುದನ್ನು ಕಂಡೆನು. ಅವರು ನನಗೆ ಹೀಗೆಂದು ಅಪ್ಪಣೆಮಾಡಿದರು: “ಹೊಸ್ತಿಲುಗಳು ಕದಲುವಂತೆ ಕಂಬಗಳ ಬೋದಿಗೆಗೆ ಬಲವಾಗಿ ಹೊಡೆ. ಅವು ಕುಸಿದು ಎಲ್ಲರ ತಲೆಯ ಮೇಲೆ ಬೀಳಲಿ. ಅಳಿದುಳಿದವರನ್ನು ಖಡ್ಗಕ್ಕೆ ತುತ್ತಾಗಿಸುವೆನು. ಅವರಲ್ಲಿ ಯಾರೂ ಓಡಿಹೋಗರು; ಯಾರೂ ತಪ್ಪಿಸಿಕೊಳ್ಳರು.</verse>
				<verse number="2">ಅವರು ಪಾತಾಳಕ್ಕೆ ಇಳಿದುಹೋದರೂ ಅಲ್ಲಿಂದ ಅವರನ್ನು ಎಳೆದುತರುವೆನು. ಆಕಾಶಕ್ಕೆ ಹತ್ತಿಹೋದರೂ ಅಲ್ಲಿಂದ ಇಳಿಸುವೆನು.</verse>
				<verse number="3">ಕರ್ಮೆಲ್ ಬೆಟ್ಟದ ತುದಿಯಲ್ಲಿ ಅವಿತುಕೊಂಡರೂ ಅವರನ್ನು ಹುಡುಕಿ ಅಲ್ಲಿಂದ ಹಿಡಿದುತರುವೆನು. ನನ್ನ ಕಣ್ಣುತಪ್ಪಿಸಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ, ಅಲ್ಲಿಯೂ ಅವರನ್ನು ಕಚ್ಚುವಂತೆ ಘಟಸರ್ಪಕ್ಕೆ ಆಜ್ಞೆಮಾಡುವೆನು.</verse>
				<verse number="4">ಶತ್ರುವಶವಾಗಿ ಸೆರೆಗೆ ಹೋಗಿದ್ದರೂ ಅಲ್ಲಿಯೂ ಖಡ್ಗವು ನನ್ನ ಆಜ್ಞಾನುಸಾರ ಅವರನ್ನು ಕೊಲ್ಲುವುದು; ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿಯೇ ಅವರ ಮೇಲೆ ಕಣ್ಣಿಡುವೆನು.</verse>
				<verse number="5">ಸೇನಾಧಿಶ್ವರ ದೇವರಾದ ಸರ್ವೇಶ್ವರ ಮುಟ್ಟಿದ ಮಾತ್ರಕ್ಕೆ ಕರಗುವುದು ಭೂಮಿ. ಗೋಳಿಡುವುದು ಸಕಲ ಜನತೆ ಉಬ್ಬುವುದು ನಾಡೆಲ್ಲ ನೈಲ್ ನದಿಯಂತೆ ಕುಗ್ಗಿ ಕರಗುವುದು ಈಜಿಪ್ಟಿನ ನದಿಯಂತೆ</verse>
				<verse number="6">ಉನ್ನತದಲ್ಲಿ ಹಲವು ಉಪ್ಪರಿಗೆಗಳನ್ನು ನಿರ್ಮಿಸುವವ ಆತನೆ ಭುವಿಯಲ್ಲಿ ಗುಮ್ಮಟವನ್ನು ಸ್ಥಾಪಿಸಿಕೊಂಡವನು ಆತನೆ ಸಾಗರದ ನೀರನ್ನು ಸೇದಿ ಧರೆಯ ಮೇಲೆ ಸುರಿಯುವವ ಆತನೆ ಆತನ ನಾಮಧೇಯ ಸರ್ವೇಶ್ವರಸ್ವಾಮಿ ಎಂಬುದೇ.</verse>
				<verse number="7">“ಇಸ್ರಯೇಲಿನ ಜನರೇ, ನನ್ನ ದೃಷ್ಟಿಯಲ್ಲಿ ನೀವಾಗಲಿ ಎಥಿಯೋಪಿಯದವರಾಗಲೀ, ಒಂದೇ ಅಲ್ಲವೆ? ನಾನು ನಿಮ್ಮನ್ನು ಈಜಿಪ್ಟಿನಿಂದ ಕರೆತಂದಂತೆ ಫಿಲಿಷ್ಟಿಯರನ್ನು ಕಫ್ತೋರಿನಿಂದಲೂ, ಅರಾಮ್ಯರನ್ನು ಕೀರ್ ನಾಡಿನಿಂದಲೂ ಕರೆತರಲಿಲ್ಲವೆ?</verse>
				<verse number="8">ಒಡೆಯ ಸರ್ವೇಶ್ವರನಾದ ನಾನು ಈ ಪಾಪಮಯ ರಾಜ್ಯದ ಮೇಲೆ ಕಣ್ಣಿಟ್ಟಿದ್ದೇನೆ ಎಂಬುದನ್ನು ಗಮನಿಸಿರಿ. ಇದನ್ನು ಭೂಮಂಡಲದಿಂದ ನಾಶಮಾಡುವೆನು. ಆದರೆ ಯಕೋಬ ಮನೆತನವನ್ನು ಸಂಪೂರ್ಣವಾಗಿ ನಾಶಮಾಡೆನು.” ಇದು ಸರ್ವೇಶ್ವರಸ್ವಾಮಿಯ ನುಡಿ.</verse>
				<verse number="9">“ಇಗೋ, ಧಾನ್ಯವನ್ನು ಜರಡಿಯಲ್ಲಿ ಜಾಲಿಸುವಂತೆ ಇಸ್ರಯೇಲರನ್ನು ಸಕಲ ಜನಾಂಗಗಳೊಡನೆ ಸೇರಿಸಿ ಜಾಲಿಸಬೇಕೆಂದು ಆಜ್ಞಾಪಿಸುವೆನು. ಹೀಗೆ ಕಾಳನ್ನೂ ಜೊಳ್ಳನ್ನೂ ಬೇರ್ಪಡಿಸುವೆನು.</verse>
				<verse number="10">‘ನಮಗೆ ಯಾವುದೇ ಆಪತ್ತು ತಟ್ಟದು. ಯಾವುದೇ ವಿಪತ್ತು ಅಡ್ಡಬರದು’ ಎಂದುಕೊಳ್ಳುವ ನನ್ನ ಜನರಲ್ಲಿನ ಪಾಪಿಗಳೆಲ್ಲರು ಖಡ್ಗದಿಂದ ಹತರಾಗುವರು.”</verse>
				<verse number="11">ಸರ್ವೇಶ್ವರ ಇಂತೆನ್ನುತ್ತಾರೆ: “ದಿನ ಬರಲಿದೆ. ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು. ಹಾಳಾದದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು.</verse>
				<verse number="12">ಹೀಗೆ ನನ್ನ ಜನರು ಎದೋಮಿನ ಮಿಕ್ಕಭಾಗವನ್ನೂ ಸರ್ವೇಶ್ವರನ ಪ್ರಜೆ ಎನಿಸಿಕೊಂಡ ಸಕಲ ಜನಾಂಗಗಳನ್ನೂ ಸ್ವಾಧೀನಪಡಿಸಿಕೊಳ್ಳುವರು.” ಈ ಕಾರ್ಯವನ್ನು ಸಾಧಿಸುವಂಥ ಸರ್ವೇಶ್ವರಸ್ವಾಮಿಯ ನುಡಿಯಿದು:</verse>
				<verse number="13">ಕಾಲ ಬರುವುದು: ಆಗ - ಹೊಸ ಬಿತ್ತನೆಯಾಗುವುದು ಕೊಯ್ಯುವವನ ಹಿಂದೆಯೆ; ಹೊಸ ಫಸಲು ಸಿದ್ಧವಾಗುವುದು ದ್ರಾಕ್ಷೆ ತುಳಿಯುವವನ ಮುಂದೆಯೆ. ಸುರಿಸುವುವು ದ್ರಾಕ್ಷಾರಸವನು ಬೆಟ್ಟಗಳು ಕರಗುವಂತಿರುವುವು ಅದರಿಂದ ಎಲ್ಲ ಗುಡ್ಡಗಳು.</verse>
				<verse number="14">ಸನಾತನ ಸೌಭಾಗ್ಯಕ್ಕೆ ಮರಳಿಸುವೆನು ನನ್ನ ಜನರಾದ ಇಸ್ರಯೇಲರನು. ವಾಸಮಾಡುವರವರು ಪಾಳುಬಿದ್ದ ಪಟ್ಟಣಗಳನು ಮತ್ತೆ ಕಟ್ಟಿಕೊಂಡು. ಕುಡಿಯುವರು ಸಮೃದ್ಧಿಯಾಗಿ ದ್ರಾಕ್ಷಾತೋಟಗಳನ್ನು ಮಾಡಿಕೊಂಡು. ತಿನ್ನುವರು ಯಥೇಚ್ಛವಾಗಿ ಫಲವೃಕ್ಷಗಳನು ಬೆಳೆಸಿಕೊಂಡು.</verse>
				<verse number="15">ಬೇರೂರಿಸುವೆನು ಅವರನು ಸ್ವಂತ ನಾಡಲಿ ಕೀಳರಾರೂ ಅವರನು ಅಲ್ಲಿಂದ ಮರಳಿ.” ಇದು ನಿನ್ನ ದೇವರಾದ ಸರ್ವೇಶ್ವರನ ನುಡಿ.</verse>
			</chapter>
		</book>
		<book number="31">
			<chapter number="1">
				<verse number="1">ಓಬದ್ಯನು ಕಂಡ ದೈವದರ್ಶನ: ಎದೋಮ್ ನಾಡಿನ ವಿಷಯವಾಗಿ ಸ್ವಾಮಿ ಸರ್ವೇಶ್ವರ ಇಂತೆನ್ನುತ್ತಾರೆ: “ಹೊರಡಿರಿ, ಎದೋಮಿನ ಮೇಲೆ ಯುದ್ಧಮಾಡಲು ತೆರಳೋಣ” ಹೀಗೆಂದು ತಮ್ಮ ದೂತನ ಮುಖಾಂತರ ಸರ್ವೇಶ್ವರ ರಾಷ್ಟ್ರಗಳಿಗೆ ಹೇಳಿಕಳುಹಿಸಿದ್ದಾರೆ. ಅವರಿಂದ ಬಂದ ಈ ಸಮಾಚಾರವನ್ನು ನಾವು ಕೇಳಿದ್ದೇವೆ.</verse>
				<verse number="2">“ಎದೋಮೇ, ಇಗೋ, ರಾಷ್ಟ್ರಗಳಲ್ಲಿ ನಿನ್ನನ್ನು ಅತ್ಯಲ್ಪಳನ್ನಾಗಿ ಮಾಡುತ್ತೇನೆ. ನೀನು ಬಹು ತಾತ್ಸಾರಕ್ಕೆ ಗುರಿಯಾಗುವೆ.</verse>
				<verse number="3">ನಿನ್ನ ದುರಹಂಕಾರ ನಿನ್ನನ್ನು ವಂಚಿಸಿದೆ.” ‘ಉನ್ನತಸ್ಥಾನದಲ್ಲಿ ವಾಸವಾಗಿದ್ದೇನೆ; ಬಂಡೆಗಳ ಬಿರುಕುಗಳಲ್ಲಿ ಭದ್ರವಾಗಿದ್ದೇನೆ; ನನ್ನನ್ನು ನೆಲಕ್ಕೆ ಇಳಿಸಬಲ್ಲವರು ಯಾರು?’ ಎನ್ನುತ್ತಿರುವೆ.</verse>
				<verse number="4">ಅದಕ್ಕೆ ಸರ್ವೇಶ್ವರ: “ನೀನು ಹದ್ದಿನ ಮಟ್ಟದಲ್ಲಿ ಹಾರಾಡುತ್ತಿದ್ದರೂ ನಕ್ಷತ್ರಮಂಡಲದಲ್ಲಿ ನೆಲೆಗೊಂಡಿದ್ದರೂ ಅಲ್ಲಿಂದಲೂ ನಿನ್ನನ್ನು ಇಳಿಸಿಬಿಡುತ್ತೇನೆ,” ಎನ್ನುತ್ತಾರೆ.</verse>
				<verse number="5">ನಿನ್ನಲ್ಲಿಗೆ ಕಳ್ಳರಾಗಲಿ, ರಾತ್ರಿಯಲ್ಲಿ ಪಂಜುಗಳ್ಳರಾಗಲಿ ಬಂದರೆ ಅವರು ತಮಗೆ ಬೇಕಾದಷ್ಟನ್ನು ಮಾತ್ರ ದೋಚಿಕೊಂಡು ಹೋಗುತ್ತಿದ್ದರಲ್ಲವೆ?</verse>
				<verse number="6">ಆದರೆ ಏಸಾವಿನ ಆಸ್ತಿಪಾಸ್ತಿ ಸಂಪೂರ್ಣವಾಗಿ ಸೂರೆಯಾಗಿದೆ.</verse>
				<verse number="7">ನನ್ನ ಮಿತ್ರಮಂಡಲಿಯವರೇ ನಿನ್ನನ್ನು ಬೆನ್ನಟ್ಟಿಬಂದಿದ್ದಾರೆ. ನಿನ್ನನ್ನು ಗಡಿಯಾಚೆ ತಳ್ಳಿಬಿಟ್ಟಿದ್ದಾರೆ. ನಿನ್ನ ಆಪ್ತರೇ ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ. ನಿನ್ನ ಅನ್ನ ತಿಂದವರೇ ತಿಳಿಗೇಡಿಯಾದ ನಿನಗೆ ಉರುಲೊಡ್ಡಿದ್ದಾರೆ</verse>
				<verse number="8">ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಲ್ಲಿ ಎದೋಮಿನ ಜ್ಞಾನಿಗಳನ್ನೂ ಏಸಾವಿನ ಪರ್ವತದ ಬುದ್ಧಿಜೀವಿಗಳನ್ನೂ ನಾನು ಅಳಿಸದೆ ಬಿಡುವೆನೋ?</verse>
				<verse number="9">ತೇಮಾನ್ ನಾಡೇ, ನಿನ್ನ ಶೂರರು ದಿಗ್ಭ್ರಾಂತರಾಗುವರು; ಏಸಾವಿನ ಪ್ರಾಂತ್ಯದಲ್ಲಿ ಎಲ್ಲರೂ ಹತರಾಗುವರು.</verse>
				<verse number="10">“ನಿನ್ನ ತಮ್ಮನಾದ ಯಕೋಬನ ವಿರುದ್ಧ ನಡೆಸಿದ ಹಿಂಸಾಕೃತ್ಯಗಳಿಗಾಗಿ ನೀನು ಅವಮಾನಕ್ಕೊಳಗಾಗುವೆ. ನಿತ್ಯನಾಶನಕ್ಕೆ ಈಡಾಗುವೆ.</verse>
				<verse number="11">ನಿನ್ನ ತಮ್ಮನ ಆಸ್ತಿಯನ್ನು ಕೊಳ್ಳೆಹೊಡೆದ ದಿನದಲ್ಲಿ ನೀನು ತಟಸ್ಥನಾಗಿ ನೋಡುತ್ತಾ ನಿಂತಿದ್ದೆ. ಪರಕೀಯರು ಆತನ ಪುರದ್ವಾರಗಳನ್ನು ಪ್ರವೇಶಿಸಿ ಜೆರುಸಲೇಮಿನ ಸೊತ್ತಿಗಾಗಿ ಚೀಟುಹಾಕಿದ ದಿನದಂದು ನೀನೂ ಅವರಂತೆ ಇದ್ದೆ.</verse>
				<verse number="12">ನಿನ್ನ ತಮ್ಮನ ದುರ್ದಿನದಲ್ಲಿ, ಅವರ ಅಪಾಯಕಾಲದಲ್ಲಿ ನೀನು ಸುಮ್ಮನೆ ನೋಡುತ್ತಾ ನಿಂತಿರಬಾರದಿತ್ತು. ಯೆಹೂದ್ಯರ ವಿನಾಶದಿನದಲ್ಲಿ ಸಂತೋಷಪಡಬಾರದಿತ್ತು. ಅವರ ಸಂಕಟಕಾಲದಲ್ಲಿ ನೀನು ಹಿಗ್ಗಬಾರದಿತ್ತು.</verse>
				<verse number="13">ನನ್ನ ಜನರ ಆಪತ್ಕಾಲದಲ್ಲಿ ನೀನು ಅವರ ಪುರದ್ವಾರದೊಳಗೆ ಪ್ರವೇಶಿಸಬಾರದಿತ್ತು. ಅವರ ಸೊತ್ತಿಗೆ ನೀನು ಕೈಹಾಕಬಾರದಿತ್ತು.</verse>
				<verse number="14">ತಪ್ಪಿಸಿಕೊಂಡು ಓಡಿಹೋಗುತ್ತಿದ್ದ ಅವರನ್ನು ಕೊಲ್ಲುವುದಕ್ಕಾಗಿ ಕೂಡುದಾರಿಗಳಲ್ಲಿ ನಿಲ್ಲಬಾರದಿತ್ತು. ತುರ್ತುಪರಿಸ್ಥಿತಿಯಲ್ಲಿ ತಪ್ಪಿಸಿಕೊಂಡವರನ್ನು ಶತ್ರುವಿನ ಕೈಗೆ ಒಪ್ಪಿಸಬಾರದಿತ್ತು.</verse>
				<verse number="15">“ಸಮಸ್ತ ರಾಷ್ಟ್ರಗಳಿಗೂ ಸರ್ವೇಶ್ವರನ ದಿನ ಸಮೀಪಿಸಿದೆ. ನೀನು ಮಾಡಿದ್ದನ್ನೆ ನಿನಗೂ ಮಾಡಲಾಗುವುದು. ನಿನ್ನ ದುಷ್ಕೃತ್ಯವು ನಿನ್ನ ತಲೆಗೇ ಬರುವುದು.</verse>
				<verse number="16">ಜನರೇ, ಪವಿತ್ರಪರ್ವತದ ಮೇಲೆ ನನ್ನ ದಂಡನೆಯ ಕಹಿಪಾನಮಾಡಿದಿರಿ. ಅಂತೆಯೇ ಸಕಲ ರಾಷ್ಟ್ರಗಳೂ ಕಹಿಪಾನ ಮಾಡುವುವು. ಹೌದು, ಪದೇಪದೇ ಪಾನಮಾಡಿ ತೂರಾಡುವುವು. ಅಂತ್ಯದಲ್ಲಿ ಇಲ್ಲದಂತಾಗುವುವು.</verse>
				<verse number="17">“ಆದರೆ ತಪ್ಪಿಸಿಕೊಂಡವರು ಸಿಯೋನ್ ಪರ್ವತದ ಮೇಲೆ ಇರುವರು. ಅದು ಪುಣ್ಯಕ್ಷೇತ್ರ ಎನಿಸಿಕೊಳ್ಳುವುದು; ಯಕೋಬನ ವಂಶಜರು ತಮ್ಮ ಸ್ವತ್ತನ್ನು ಮರಳಿ ಅನುಭವಿಸುವರು.</verse>
				<verse number="18">ಯಕೋಬವಂಶ ಅಗ್ನಿಯಂತೆ; ಜೋಸೆಫನ ವಂಶ ಜ್ವಾಲೆಯಂತೆ. ಇವೆರಡೂ ಸೇರಿ ಕೂಳೆಯಂತೆ ಇರುವ ಏಸಾವಿನ ವಂಶವನ್ನು ಧಗಧಗನೆ ದಹಿಸಿ ಭಸ್ಮಮಾಡುವುವು. ಏಸಾವಿನ ವಶದಲ್ಲಿ ಯಾರೂ ಉಳಿಯುವುದಿಲ್ಲ.” ಇದು ಸರ್ವೇಶ್ವರಸ್ವಾಮಿಯ ನುಡಿ.</verse>
				<verse number="19">ಆಗ ದಕ್ಷಿಣವಲಯದವರು ಏಸಾವಿನ ಪರ್ವತವನ್ನು ಸ್ವಾಧೀನಪಡಿಸಿಕೊಳ್ಳುವರು. ಪಶ್ಚಿಮದ‌ ಬಯಲು ಸೀಮೆಯವರು ಫಿಲಿಷ್ಟಿಯವನ್ನೂ ಎಫ್ರಯಿಮ್ ಮತ್ತು ಸಮಾರ್ಯದ ಭೂಮಿಯನ್ನೂ ವಶಪಡಿಸಿಕೊಳ್ಳುವರು. ಬೆನ್ಯಾಮಿನ ವಂಶಜರು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವರು.</verse>
				<verse number="20">ಸೆರೆಹೋಗಿರುವ ಇಸ್ರಯೇಲಿನ ಸೈನಿಕರು ಕಾನಾನ್ ನಾಡನ್ನು ಚಾರೆಪತಿನವರೆಗೆ ವಶಪಡಿಸಿಕೊಳ್ಳುವರು. ಸೆಪಾರದ ಎಂಬಲ್ಲಿ ಸೆರೆಯಾಗಿರುವ ಜೆರುಸಲೇಮಿನವರು ದಕ್ಷಿಣ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.</verse>
				<verse number="21">ಉದ್ಧಾರಕನು ಏಸಾವಿನ ಪರ್ವತವನ್ನು ಆಳಲು ಸಿಯೋನ್ ಪರ್ವತವನ್ನು ಏರುವನು. ಆಗ ರಾಜ್ಯಭಾರವು ಸರ್ವೇಶ್ವರಸ್ವಾಮಿಯದಾಗಿರುವುದು.”</verse>
			</chapter>
		</book>
		<book number="32">
			<chapter number="1">
				<verse number="1">ಒಂದು ದಿನ ಅಮಿತ್ತಾಯನ ಮಗನಾದ ಯೋನನಿಗೆ ಸರ್ವೇಶ್ವರಸ್ವಾಮಿಯ ವಾಣಿ ಕೇಳಿಸಿತು.</verse>
				<verse number="2">“ನಿನೆವೆ ಮಹಾನಗರದ ನಿವಾಸಿಗಳು ಎಷ್ಟು ದುಷ್ಟರೆಂಬುದು ನನಗೆ ತಿಳಿದುಬಂದಿದೆ. ನೀನು ಅಲ್ಲಿಗೆ ಹೋಗು ಅವರನ್ನು ಕಟುವಾಗಿ ಖಂಡಿಸು.”</verse>
				<verse number="3">ಆದರೆ ಯೋನನು ಆ ಸ್ವಾಮಿಯ ಸನ್ನಿಧಿಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನೆವೆಗೆ ಹೋಗುವುದರ ಬದಲು ತಾರ್ಷಿಷಿಗೆ ಅಭಿಮುಖವಾಗಿ ಓಡಿಹೋಗಲು ಹೊರಟನು. ಜೊಪ್ಪ ಎಂಬ ಊರನ್ನು ತಲುಪಿದಾಗ ತಾರ್ಷಿಷಿಗೆ ಹೊರಡಲಿದ್ದ ಹಡಗೊಂದನ್ನು ಕಂಡನು. ಪ್ರಯಾಣದ ದರವನ್ನು ತೆತ್ತು ಸಹನಾವಿಕರೊಂದಿಗೆ ಹಡಗನ್ನು ಹತ್ತಿದನು. ಹೀಗೆ ಯೋನನು ಸರ್ವೇಶ್ವರಸ್ವಾಮಿಯ ಸನ್ನಿಧಿಯಿಂದ ದೂರಹೋಗಬಹುದೆಂದು ಭಾವಿಸಿದನು.</verse>
				<verse number="4">ಆದರೆ ಸರ್ವೇಶ್ವರ ಸಮುದ್ರದಲ್ಲಿ ಬಿರುಗಾಳಿಯೊಂದನ್ನು ಬರಮಾಡಿದರು. ಅಲೆಗಳ ಹೊಡೆತಕ್ಕೆ ಹಡಗು ನುಚ್ಚುನೂರಾಗಿ ಒಡೆದುಹೋಗುವುದರಲ್ಲಿತ್ತು. ದಿಗ್ಭ್ರಾಂತರಾದ ನಾವಿಕರು ಪ್ರಾಣರಕ್ಷಣೆಗಾಗಿ ತಮ್ಮ ದೇವದೇವತೆಗಳ ಮೊರೆ ಹೊಕ್ಕರು. ಪ್ರಾಣಾಪಾಯದಿಂದ ಪಾರಾಗಲು ತಮ್ಮಲ್ಲಿದ್ದ ಸರಕುಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆದರು.</verse>
				<verse number="5">ಇಷ್ಟರೊಳಗೆ ಯೋನನು ಹಡಗಿನ ತಳಭಾಗಕ್ಕೆ ಇಳಿದುಹೋಗಿ ಹಾಯಾಗಿ ಮಲಗಿದ್ದನು. ಅವನಿಗೆ ಗಾಢನಿದ್ರೆ ಹತ್ತಿತ್ತು.</verse>
				<verse number="6">ಇದನ್ನು ಕಂಡ ನೌಕಾಧಿಕಾರಿ ಅಲ್ಲಿಗೆ ಬಂದು, ಅವನನ್ನು ಎಬ್ಬಿಸುತ್ತಾ: “ಏನಯ್ಯಾ, ಹಾಯಾಗಿ ಇಲ್ಲಿ ನಿದ್ರೆ ಮಾಡುತ್ತಿದ್ದೀಯಲ್ಲ, ಎದ್ದೇಳು. ನಿನ್ನ ದೇವರಿಗೆ ಮೊರೆಯಿಡು. ಅವರಾದರೂ ನಮ್ಮ ಮೇಲೆ ಕರುಣೆತೋರಿ, ನಾವು ನಾಶವಾಗದಂತೆ ಕಾಪಾಡಿಯಾರು,” ಎಂದನು.</verse>
				<verse number="7">ಆಗ ನಾವಿಕರು: “ನಮಗೆ ಸಂಭವಿಸಿರುವ ಈ ದುರಂತಕ್ಕೆ ಕಾರಣ ಯಾರಿರಬಹುದು? ಬನ್ನಿ, ಚೀಟುಹಾಕಿ ನೋಡೋಣ” ಎಂದು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಹಾಗೆ ಮಾಡಿದಾಗ ಚೀಟು ಯೋನನ ಹೆಸರಿಗೆ ಬಂತು.</verse>
				<verse number="8">ಆಗ ನಾವಿಕರು: “ನೀನು ಯಾರು? ಎಲ್ಲಿಂದ ಬಂದೆ? ಯಾವ ಕೆಲಸದ ಮೇಲೆ ಬಂದೆ? ನೀನು ಯಾವ ಜನಾಂಗದವನು? ಈ ದುರಂತಕ್ಕೆ ಕಾರಣ ಯಾರು?” ಎಂದು ಪ್ರಶ್ನಿಸಿದರು.</verse>
				<verse number="9">ಅದಕ್ಕೆ ಯೋನನು: “ನಾನು ಹಿಬ್ರಿಯನು. ಸಮುದ್ರವನ್ನೂ ಭೂಮಿಯನ್ನೂ ಸೃಷ್ಟಿಸಿದ ಪರಲೋಕ ದೇವರಾದ ಸರ್ವೇಶ್ವರನ ಭಕ್ತನು ನಾನು,” ಎಂದು ಉತ್ತರಿಸಿದನು.</verse>
				<verse number="10">ಅಲ್ಲದೆ ತಾನು ಆ ಸ್ವಾಮಿಯ ಸನ್ನಿಧಿಯಿಂದ ಓಡಿಹೋಗುತ್ತಿರುವುದಾಗಿಯೂ ತಿಳಿಸಿದನು. ಇದನ್ನು ಕೇಳಿದ್ದೇ ನಾವಿಕರು ಭಯಭ್ರಾಂತರಾದರು. “ಎಂಥಾ ತಪ್ಪುಮಾಡಿದೆ!” ಎಂದು ಅವನನ್ನು ಖಂಡಿಸಿದರು.</verse>
				<verse number="11">ಆಗ ಬಿರುಗಾಳಿ ಮತ್ತಷ್ಟು ತೀವ್ರಗೊಳ್ಳುತ್ತಿತ್ತು. ನಾವಿಕರು ಯೋನನಿಗೆ: “ಸಮುದ್ರವು ಶಾಂತವಾಗಬೇಕಾದರೆ ನಿನ್ನನ್ನು ಏನು ಮಾಡಬೇಕು? ಹೇಳು,” ಎಂದು ಕೇಳಿದರು.</verse>
				<verse number="12">ಯೋನನು: “ನನ್ನನ್ನು ಎತ್ತಿ ಸಮುದ್ರಕ್ಕೆ ಎಸೆಯಿರಿ. ಆಗ ಅದು ಶಾಂತವಾಗುವುದು. ನೀವು ಇಂಥ ಭೀಕರ ಬಿರುಗಾಳಿಗೆ ತುತ್ತಾಗಲು ನಾನೇ ಕಾರಣ. ಇದನ್ನು ನಾನು ಚೆನ್ನಾಗಿ ಬಲ್ಲೆ,” ಎಂದನು.</verse>
				<verse number="13">ನಾವಿಕರು ಅವನ ಸಲಹೆಗೆ ಒಪ್ಪದೆ, ಹಡಗನ್ನು ದಡಕ್ಕೆ ಸಾಗಿಸಲು ತಮ್ಮ ಶಕ್ತಿಸಾಮರ್ಥ್ಯವನ್ನೆಲ್ಲ ಪ್ರಯೋಗಿಸಿ ಹುಟ್ಟುಹಾಕಿದರು. ಆದರೆ ಸಾಧ್ಯವಾಗಲಿಲ್ಲ. ಸಮುದ್ರವು ಅಲ್ಲೋಲಕಲ್ಲೋಲವಾಗುತ್ತಲೇ ಇತ್ತು.</verse>
				<verse number="14">ಆಗ ಅವರು ಬೇರೆ ದಿಕ್ಕುತೋಚದೆ ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತಾ: “ಸ್ವಾಮಿ, ಈ ನಿರಪರಾಧಿಯ ಪ್ರಾಣಹಾನಿಗೆ ನಾವು ಹೊಣೆಯಲ್ಲ. ಇದಕ್ಕಾಗಿ ನಮ್ಮನ್ನು ನಾಶಮಾಡಬೇಡಿ. ಇದೆಲ್ಲವೂ ಸಂಭವಿಸಿರುವುದು ನಿಮ್ಮ ಚಿತ್ತವಲ್ಲವೇ?’ ಎಂದು ದೈನ್ಯದಿಂದ ಪ್ರಾರ್ಥಿಸಿದರು.</verse>
				<verse number="15">ಬಳಿಕ ಅವರು ಯೋನನನ್ನು ಎತ್ತಿ ಸಮುದ್ರಕ್ಕೆ ಎಸೆದರು. ತಕ್ಷಣವೇ, ಭೋರ್ಗರೆಯುತ್ತಿದ್ದ ಸಮುದ್ರ ಶಾಂತವಾಯಿತು.</verse>
				<verse number="16">ಇದನ್ನು ಕಂಡು ಜನರು ಸರ್ವೇಶ್ವರಸ್ವಾಮಿಗೆ ಬಹುವಾಗಿ ಭಯಪಟ್ಟರು; ಯಜ್ಞವನ್ನು ಅರ್ಪಿಸಿ, ಹರಕೆಗಳನ್ನು ಸಲ್ಲಿಸಿದರು.</verse>
				<verse number="17">ಇತ್ತ ಸರ್ವೇಶ್ವರಸ್ವಾಮಿಯ ಆಜ್ಞಾನುಸಾರ ದೊಡ್ಡ ಮೀನೊಂದು ಬಂದು ಯೋನನನ್ನು ನುಂಗಿತು. ಅವನು ಅದರ ಹೊಟ್ಟೆಯಲ್ಲಿ ಮೂರು ಹಗಲು, ಮೂರು ಇರುಳು ಇದ್ದನು.</verse>
			</chapter>
			<chapter number="2">
				<verse number="1">ಆ ಮೀನಿನ ಹೊಟ್ಟೆಯೊಳಗಿಂದಲೇ ಯೋನನು ಸರ್ವೇಶ್ವರಸ್ವಾಮಿ ದೇವರಿಗೆ ಈ ರೀತಿ ಪ್ರಾರ್ಥನೆ ಮಾಡಿದನು:</verse>
				<verse number="2">“ಸಂಕಟದಲಿ, ಸರ್ವೇಶ್ವರಾ, ನಾ ನಿನಗೆ ಮೊರೆಯಿಟ್ಟೆ ನೀನೆನ್ನ ಮೊರೆಗೆ ಕಿವಿಗೊಟ್ಟೆ. ಪಾತಾಳದಂತರಾಳದಿಂದ ನಿನ್ನ ನೆರವನ್ನು ಬೇಡಿದೆ ನೀನೆನ್ನ ಪ್ರಾರ್ಥನೆಯನ್ನಾಲಿಸಿದೆ.</verse>
				<verse number="3">ಸಾಗರದ ಉದರಕೆ ನೀನೆನ್ನ ತಳ್ಳಿರುವೆ ಅಗಾಧ ಜಲದೊಳಗೆ ದೂಡಿರುವೆ. ಸುತ್ತಮುತ್ತಲಿದೆ ಪ್ರವಾಹದ ಹೊಡೆತ ಮೇಲ್ಗಡೆ ಅಬ್ಬರಿಪ ಅಲೆಗಳ ಭೋರ್ಗರೆತ!</verse>
				<verse number="4">ನಿನ್ನ ಸನ್ನಿಧಿಯಿಂದ ನಾನಿನ್ನು ಬಹಿಷ್ಕೃತ ಕಾಣೆನೆಂದೂ ನಿನ್ನ ಪವಿತ್ರಾಲಯ ನಿರುತ. ಈ ಭಾಗ್ಯಗಳೆಲ್ಲ ಎನಗಿಲ್ಲವೆಂದು ಪರಿಪರಿಯಾಗಿ ಮರುಗುತಿರುವೆನಿಂದು.</verse>
				<verse number="5">ಸುತ್ತುವರಿಯೆ ಜಲರಾಶಿ, ಉಸಿರು ಕಟ್ಟಿದಂತಾಯ್ತು ಸಾಗರವು ಸಂಪೂರ್ಣವಾಗೆನ್ನ ಆವರಿಸಿತು; ಎನ್ನ ಶಿರವನು ಜೊಂಡು ಸುತ್ತುಗಟ್ಟಿತು.</verse>
				<verse number="6">ಪರ್ವತಗಳ ತಳಹದಿಗೆ ದೇವಾ, ನಾನಿಳಿದೆ ಮುಚ್ಚಿಕೊಂಡವು ಜಗದ ದ್ವಾರಗಳು ನನ್ನ ಹಿಂದೆ. ಎನ್ನ ಕಾಪಾಡಿದೆ ಅಂಥ ಕೋಪದಿಂದ ಸರ್ವೇಶ್ವರಾ, ಮೇಲಕ್ಕೆತ್ತಿದೆಯೆನ್ನ ಜೀವಸಹಿತ.</verse>
				<verse number="7">ನಂದಿದಂತಾಗಲು ಎನ್ನ ಪ್ರಾಣ ದೀವಿಗೆ ಮೊರೆಯಿಟ್ಟೆ, ಸರ್ವೇಶ್ವರಾ, ನಾ ನಿನಗೆ ನಿನ್ನ ಪರಿಶುದ್ಧ ಆಲಯದಲಿ ನೀನಾಸೀನನಿದ್ದೆ ಎನ್ನ ಪ್ರಾರ್ಥನೆಯನು ನೀನಾಲಿಸಿದೆ.</verse>
				<verse number="8">ನಿರರ್ಥಕ ವಿಗ್ರಹಗಳನಾರಾಧಿಪ ಜನರು ತೊರೆದಿಹರು ಹಾರ್ದಿಕ ಭಕ್ತಿಯನು</verse>
				<verse number="9">ನಾನಾದರೋ ಹಾಡಿ ಹೊಗಳುವೆ ನಿನ್ನನು ನಿನಗರ್ಪಿಸುವೆ ಸಮರ್ಪಕ ಬಲಿಯನು ಬಿಡದೆ ಸಲ್ಲಿಸುವೆ ಹೊತ್ತ ಹರಕೆಯನು ಹೊಂದುವೆ ಸ್ವಾಮಿಯಿಂದಲೆ ರಕ್ಷಣೆಯನು.”</verse>
				<verse number="10">ಸರ್ವೇಶ್ವರಸ್ವಾಮಿಯ ಆಜ್ಞೆಯ ಪ್ರಕಾರ ಆ ಮೀನು ಯೋನನನ್ನು ದಡದ ಮೇಲೆ ಕಕ್ಕಿತು.</verse>
			</chapter>
			<chapter number="3">
				<verse number="1">ಯೋನನಿಗೆ ಆ ಸ್ವಾಮಿಯ ವಾಣಿ ಪುನಃ ಕೇಳಿಸಿತು:</verse>
				<verse number="2">“ಎದ್ದು ಮಹಾನಗರವಾದ ನಿನೆವೆಗೆ ಹೋಗು. ನಾನು ನಿನಗೆ ತಿಳಿಸಿದ ಸಂದೇಶವನ್ನು ಅಲ್ಲಿಯ ನಿವಾಸಿಗಳಿಗೆ ಸಾರು,” ಎಂದಿತು.</verse>
				<verse number="3">ಸ್ವಾಮಿಯ ಆಜ್ಞಾನುಸಾರ ಯೋನನು ನಿನೆವೆಗೆ ಹೋದನು. ಅದೊಂದು ವಿಸ್ತಾರವಾದ ನಗರ. ಅದನ್ನು ಹಾದುಹೋಗಲು ಮೂರು ದಿನಗಳು ಹಿಡಿಯುತ್ತಿತ್ತು.</verse>
				<verse number="4">ನಗರವನ್ನು ಪ್ರವೇಶಿಸಿ ಒಂದು ದಿನದ ಪ್ರಯಾಣಮಾಡಿದ ನಂತರ ಯೋನನು ಸ್ವಾಮಿಯ ಸಂದೇಶವನ್ನು ಸಾರುತ್ತಾ, “ಜನರೇ, ಕೇಳಿ: ನಿಮ್ಮ ನಗರ ನಲವತ್ತು ದಿನಗಳಲ್ಲಿ ನಾಶವಾಗುವುದು,” ಎಂದನು.</verse>
				<verse number="5">ಆ ನಗರದ ನಿವಾಸಿಗಳು ದೇವರ ಸಂದೇಶವನ್ನು ನಂಬಿದರು. ಪ್ರತಿಯೊಬ್ಬನೂ ಉಪವಾಸ ಕೈಗೊಳ್ಳಬೇಕೆಂದು ನಿರ್ಧರಿಸಿದರು. ಹಿರಿಯರು ಮೊದಲುಗೊಂಡು ಕಿರಿಯರವರೆಗೆ - ಎಲ್ಲರೂ ಮನಃಪರಿವರ್ತನೆಯ ಚಿಹ್ನೆಯಾಗಿ ಗೋಣಿತಟ್ಟನ್ನು ಉಟ್ಟುಕೊಂಡರು.</verse>
				<verse number="6">ಈ ಸಂಗತಿ ನಿನೆವೆಯ ಅರಸನ ಕಿವಿಗೆ ಬಿದ್ದಿತು. ಅವನು ಸಿಂಹಾಸನದಿಂದ ಇಳಿದು, ತನ್ನ ರಾಜವಸ್ತ್ರಗಳನ್ನು ತೆಗೆದುಬಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಕುಳಿತುಕೊಂಡನು.</verse>
				<verse number="7">ಕೂಡಲೇ ತನ್ನ ಪ್ರಜೆಗಳಿಗೆ ಈ ರಾಜಾಜ್ಞೆಯನ್ನು ನಿನೆವೆಯಲ್ಲಿ ಹೊರಡಿಸಿದನು: “ಅರಸನ ಹಾಗೂ ಆತನ ಆಪ್ತ ಪ್ರಮುಖರ ಆಜ್ಞೆಯಿದು: ಜನರಾಗಲೀ, ದನಕರುಗಳಾಗಲೀ, ಕುರಿಮೇಕೆಗಳಾಗಲೀ, ಯಾರೂ ಏನನ್ನೂ ತಿನ್ನಬಾರದು, ಕುಡಿಯಲೂಬಾರದು.</verse>
				<verse number="8">ಎಲ್ಲ ಜನರೂ ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು; ಪ್ರಾಣಿಗಳಿಗೂ ಹೊದಿಸಬೇಕು. ದೇವರನ್ನು ಶ್ರದ್ಧೆಯಿಂದ ಪ್ರಾರ್ಥಿಸಬೇಕು. ಎಲ್ಲರೂ ದೌರ್ಜನ್ಯವನ್ನು ತ್ಯಜಿಸಿ, ಹಿಂಸಾಚಾರವನ್ನು ಕೈಬಿಡಬೇಕು.</verse>
				<verse number="9">ಹೀಗೆ ಮಾಡಿದ್ದೇ ಆದರೆ, ದೇವರು ಒಂದುವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ತಮ್ಮ ಉಗ್ರಕೋಪವನ್ನು ತಡೆದಾರು, ನಾವು ನಾಶವಾಗದೆ ಉಳಿದೇವು.”</verse>
				<verse number="10">ಆ ಜನರು ಮಾಡಿದುದೆಲ್ಲವನ್ನು ದೇವರು ಗಮನಿಸಿದರು. ತಮ್ಮ ದುರ್ನಡತೆಯನ್ನು ಜನರು ಕೈಬಿಟ್ಟದ್ದನ್ನು ಕಂಡು, ಮನಮರುಗಿ ಅವರಿಗೆ ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ತಡೆಹಿಡಿದರು.</verse>
			</chapter>
			<chapter number="4">
				<verse number="1">ಸರ್ವೇಶ್ವರಸ್ವಾಮಿಯ ವರ್ತನೆಯು ಯೋನನಿಗೆ ಹಿಡಿಸಲಿಲ್ಲ. ಅವನ ಕೋಪ ನೆತ್ತಿಗೇರಿತು.</verse>
				<verse number="2">ಆಗ ಅವನು ಹೀಗೆಂದು ಮೊರೆಯಿಟ್ಟನು: “ಸ್ವಾಮೀ, ಈ ರೀತಿ ಸಂಭವಿಸುವುದೆಂದು ನಾನು ಸ್ವದೇಶವನ್ನು ಬಿಡುವ ಮುನ್ನವೇ ನಿಮಗೆ ಹೇಳಿದ್ದೆನಲ್ಲವೆ? ಈ ಕಾರಣದಿಂದಲೇ ಅಲ್ಲವೆ ನಾನು ತಾರ್ಷಿಷಿಗೆ ಓಡಿಹೋಗಲು ಪ್ರತ್ನಿಸಿದ್ದು? ನೀವು ಪ್ರೀತಿಸ್ವರೂಪಿ, ಕರುಣಾಮಯಿ, ಸಹನಾಶೀಲರಾದ ದೇವರು, ವಿಧಿಸಬೇಕೆಂದಿದ್ದ ಶಿಕ್ಷೆಯನ್ನು ಹಿಂತೆಗೆದುಕೊಳ್ಳುವ ದೇವರು - ಎಂದು ಆಗಲೇ ನನಗೆ ತಿಳಿದಿತ್ತು.</verse>
				<verse number="3">“ಆದುದರಿಂದ ಸರ್ವೇಶ್ವರಾ, ನನ್ನ ಪ್ರಾಣವನ್ನು ಹಿಂತೆಗೆದುಕೊಳ್ಳಿ. ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಮೊರೆಯಿಟ್ಟನು.</verse>
				<verse number="4">ಅದಕ್ಕೆ ಸರ್ವೇಶ್ವರ, “ನೀನು ಹೀಗೆ ಸಿಟ್ಟುಗೊಳ್ಳುವುದು ಸರಿಯೇ?” ಎಂದರು.</verse>
				<verse number="5">ಆಗ ಯೋನನು ನಗರವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋದನು. ಅಲ್ಲಿ ತನಗಾಗಿ ಒಂದು ಗುಡಿಸಲನ್ನು ಕಟ್ಟಿಕೊಂಡನು. ನಗರಕ್ಕೆ ಏನು ಸಂಭವಿಸುತ್ತದೋ ಎಂಬುದನ್ನು ನೋಡಲು ಅದರ ನೆರಳಿನಲ್ಲಿ ಕುಳಿತನು.</verse>
				<verse number="6">ದೇವರಾದ ಸರ್ವೇಶ್ವರ ಆ ಸ್ಥಳದಲ್ಲಿ ಒಂದು ಸೋರೆಬಳ್ಳಿ ಮೊಳೆಯುವಂತೆ ಮಾಡಿದರು. ಅದು ಬೆಳೆದು ತಲೆಗೆ ನೆರಳನ್ನೂ ಮನಸ್ಸಿಗೆ ತಣಿವನ್ನೂ ನೀಡಿತು. ಯೋನನಿಗೆ ಬಹಳ ಸಂತೋಷವಾಯಿತು.</verse>
				<verse number="7">ಆದರೆ ಮಾರನೆಯ ದಿನ ಮುಂಜಾನೆ ದೇವರ ಆಜ್ಞಾನುಸಾರ ಆ ಗಿಡಕ್ಕೆ ಹುಳುವೊಂದು ಹೊಡೆಯಿತು. ಆಗ ಗಿಡವು ಒಣಗಿಹೋಯಿತು.</verse>
				<verse number="8">ಸೂರ್ಯನು ಏರುತ್ತಿರಲು, ಸರ್ವೇಶ್ವರನ ಚಿತ್ತಾನುಸಾರ ಬಿಸಿಯಾದ ಮೂಡಣ ಗಾಳಿ ಬೀಸಿತು. ಬಿಸಿಲಿನ ತಾಪದಿಂದ ಯೋನನು ಮೂರ್ಛೆಹೋಗುವಂತಾದನು; ಸಾವನ್ನು ಅಪೇಕ್ಷಿಸುತ್ತಾ: “ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಬೇಡಿಕೊಂಡನು.</verse>
				<verse number="9">ಅದಕ್ಕೆ ದೇವರು: “ನೀನು ಸೋರೆಗಿಡದ ವಿಷಯದಲ್ಲಿ ಸಿಟ್ಟುಗೊಳ್ಳುವುದು ಸರಿಯೇ?” ಎಂದು ಕೇಳಲು, ಯೋನನು, “ಹೌದು, ಸಾವನ್ನು ಬಯಸುವಷ್ಟು ಸಿಟ್ಟುಗೊಳ್ಳುವುದು ಸರಿಯಲ್ಲವೇ?’ ಎಂದು ಉತ್ತರವಿತ್ತನು.</verse>
				<verse number="10">ಆಗ ಸರ್ವೇಶ್ವರ: “ನೀನು ಆ ಗಿಡಕ್ಕಾಗಿ ಶ್ರಮಿಸಲೂ ಇಲ್ಲ, ಅದನ್ನು ಬೆಳೆಸಲೂ ಇಲ್ಲ. ಅದು ತಾನಾಗಿಯೇ ಒಂದು ರಾತ್ರಿಯಲ್ಲಿ ಬೆಳೆಯಿತು. ಒಂದೇ ರಾತ್ರಿಯಲ್ಲಿ ಬಾಡಿಹೋಯಿತು. ಅದಕ್ಕಾಗಿ ಇಷ್ಟೊಂದು ಚಿಂತೆಯೇ?</verse>
				<verse number="11">ಹೀಗಿರುವಲ್ಲಿ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಹೆಚ್ಚುಮಂದಿ ನಿರಪರಾಧಿಗಳೂ ಅಪಾರ ಪಶುಪ್ರಾಣಿಗಳೂ ಇರುವ ನಿನೆವೆ ಮಹಾನಗರದ ಬಗ್ಗೆ ನಾನು ಇನ್ನೆಷ್ಟು ಚಿಂತೆಪಡಬೇಕು?” ಎಂದರು.</verse>
			</chapter>
		</book>
		<book number="33">
			<chapter number="1">
				<verse number="1">ಯೋಥಾಮ, ಆಹಾಜ, ಹಿಜ್ಕೀಯ ಇವರು ಜುದೇಯದ ಅರಸರು. ಇವರ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕನಿಗೆ ಒಂದು ದೈವದರ್ಶನವಾಯಿತು. ಅದು ಸಮಾರ್ಯ ಮತ್ತು ಜೆರುಸಲೇಮನ್ನು ಕುರಿತದ್ದಾಗಿತ್ತು.</verse>
				<verse number="2">ಕೇಳಿರಿ ಸರ್ವಜನಾಂಗಗಳೇ ಕಿವಿಗೊಡಿ ಬುವಿಯ ಸರ್ವನಿವಾಸಿಗಳೇ.</verse>
				<verse number="3">ಸಾಕ್ಷಿ ನುಡಿದಿಹನು ನಿಮ್ಮ ವಿರುದ್ಧ ಸರ್ವೇಶ್ವರ ಪವಿತ್ರಾಲಯದಿಂದ ಇಳಿದುಬರುತಿಹನಿದೋ ಸ್ವಾಮಿ ತನ್ನ ಆಸ್ಥಾನದಿಂದ ಜಗದ ಉನ್ನತ ಪ್ರದೇಶಗಳಲ್ಲಿ ಸಂಚರಿಸಲಿಹನಾತ.</verse>
				<verse number="4">ಬೆಂಕಿಗೆ ಕರಗುವ ಮೇಣದಂತೆ ಇಳಿಜಾರು ಪ್ರದೇಶದ ನೀರು ನೆಲವನ್ನು ಕೊರೆವಂತೆ ಕರಗಿಹೋಗುವುವು ಆತನ ಪಾದದಡಿ ಪರ್ವತಗಳು; ಸೀಳಿಹೋಗುವುವು ಕೊಲ್ಲಿಗಳು.</verse>
				<verse number="5">ಇದಕ್ಕೆಲ್ಲಾ ಕಾರಣ ಯಕೋಬನ ದ್ರೋಹ. ಇಸ್ರಯೇಲ್ ಮನೆತನದ ಪಾಪ. ಯಕೋಬನ ದ್ರೋಹಕ್ಕೆ ಕಾರಣ ಯಾವುದು? ಸಮಾರ್ಯ ಅಲ್ಲವೆ? ಜುದೇಯದ ವಿಗ್ರಹಾರಾಧನೆಯ ಸ್ಥಳ ಯಾವುದು? ಜೆರುಸಲೇಮ್ ಅಲ್ಲವೆ?</verse>
				<verse number="6">ಆದಕಾರಣ, “ನಾನು ಸಮಾರ್ಯವನ್ನು ಧೂಳಿನ ರಾಶಿಯನ್ನಾಗಿಯೂ ದ್ರಾಕ್ಷಾತೋಟಕ್ಕೆ ಒಳ್ಳೆಯ ಬಯಲನ್ನಾಗಿಯೂ ಮಾಡುವೆನು. ಕಲ್ಲುಹೆಂಟೆಗಳನ್ನು ಕಣಿವೆಗೆ ಸುರಿದುಬಿಡುವೆನು. ಅದರ ತಳಪಾಯವೇ ತೆರೆದು ಕಾಣುವಂತೆ ಮಾಡುವೆನು.</verse>
				<verse number="7">ಅದರಲ್ಲಿನ ಎರಕದ ಪ್ರತಿಮೆಗಳನ್ನು ಪುಡಿಪುಡಿ ಮಾಡುವೆನು. ಅದರ ಸಂಪಾದನೆಯೆಲ್ಲ ಅಗ್ನಿಗೆ ಆಹುತಿಯಾಗುವುದು. ಅದರ ವಿಗ್ರಹಗಳನ್ನೆಲ್ಲ ಹಾಳುಮಾಡುವೆನು. ಅವು ಸೂಳೆತನದಿಂದ ಸಂಪಾದನೆಯಾದುವು, ಸೂಳೆತನದ ಸಂಪಾದನೆಯಾಗಿಯೇ ಪರರ ಪಾಲಾಗುವುದು,” ಎಂದು ಸರ್ವೇಶ್ವರ ಹೇಳುತ್ತಾರೆ.</verse>
				<verse number="8">ಆಗ ಮೀಕನು: “ಇದಕ್ಕಾಗಿ ನಾನು ಗೋಳಾಡಿ ರೋದಿಸುವೆನು; ಬೆತ್ತಲೆಯಾಗಿ ಬರಿಗಾಲಿನಲ್ಲಿ ಪಾದಯಾತ್ರೆ ಮಾಡುವೆನು; ಗುಳ್ಳೆನರಿಗಳಂತೆ ಊಳಿಡುವೆನು, ಗೂಬೆಯಂತೆ ಘೂಂಕರಿಸುವೆನು.</verse>
				<verse number="9">ಸಮಾರ್ಯಕ್ಕೆ ಬಿದ್ದ ಪೆಟ್ಟು ಗಡುಸಾದುದು. ಅದು ಜುದೇಯಕ್ಕೂ ತಾಕಿದೆ. ಅದು ನನ್ನ ಊರಾದ ಜೆರುಸಲೇಮಿನ ಪುರದ್ವಾರವನ್ನು ಮುಟ್ಟಿದೆ,” ಎಂದನು.</verse>
				<verse number="10">ಈ ವಿಷಯವನ್ನು ಗಾತ್ ಊರಿನವರಿಗೆ ತಿಳಿಸಬೇಡಿ; ಅಳಲೂಬೇಡಿ. ಬೇತ್ಲೆಯಪ್ರದಲ್ಲಿ, ಧೂಳಿನಲ್ಲಿ ಬಿದ್ದು ಹೊರಳಾಡಿ.</verse>
				<verse number="11">ಶಾಫೀರಿನವರೇ, ಬೆತ್ತಲೆಯಾಗಿ ಲಜ್ಜೆಗೆಟ್ಟು ತೊಲಗಿರಿ. ಚಾನಾನಿನವರಿಗೆ ಹೊರಬರಲು ಧೈರ್ಯವಿಲ್ಲ. ಬೇತೇಲಿನವರ ಗೋಳಾಟ ಕೇಳಿಬಂದಾಗ, ಅಲ್ಲಿ ನಿಮಗೆ ಆಶ್ರಯವಿಲ್ಲವೆಂದು ಗೊತ್ತಾಗುವುದು.</verse>
				<verse number="12">ಮಾರೋತಿನ ನಿವಾಸಿಗಳು ತಮ್ಮ ಸಂಕಟ ಪರಿಹಾರವಾಗುವುದೋ ಇಲ್ಲವೋ ಎಂದು ವೇದನೆಪಡುತ್ತಾರೆ: ಏಕೆಂದರೆ ಸ್ವಾಮಿಯಿಂದ ಬಂದ ವಿಪತ್ತು ಜೆರುಸಲೇಮಿನ ಪುರದ್ವಾರವನ್ನು ಮುಟ್ಟಿದೆ.</verse>
				<verse number="13">ಲಾಕೀಷಿನ ನಿವಾಸಿಗಳೇ, ನಿಮ್ಮ ಕುದುರೆಗಳನ್ನು ರಥಕ್ಕೆ ಹೂಡಿರಿ. ನಿಮ್ಮ ಊರೇ ಸಿಯೋನ್ ನಗರದ ಪಾಪಕ್ಕೆ ಮೂಲ ಕಾರಣ. ಹೌದು, ಇಸ್ರಯೇಲಿನ ದ್ರೋಹಗಳು ನಿಮ್ಮಲ್ಲಿಯೇ ಕಾಣಿಸಿಕೊಂಡವು.</verse>
				<verse number="14">ಆದಕಾರಣ ನೀವು ಮೋರೆತಷತ್‍ಗಾತ್ ಪಟ್ಟಣ ನಿವಾಸಿಗಳಿಗೆ ಕಪ್ಪಕಾಣಿಕೆಯಿತ್ತು ಬೀಳ್ಕೊಡಬೇಕಾಗುವುದು. ಇಸ್ರಯೇಲಿನ ಅರಸರಿಗೆ ಅಕ್ಜೀಬಿನ ಮನೆತನದವರಿಂದ ವಂಚನೆಯಾಗುವುದು.</verse>
				<verse number="15">ಮಾರೇಷದವರೇ, ಆಕ್ರಮಣಕಾರನೊಬ್ಬನನ್ನು ನಿಮ್ಮ ಬಳಿಗೆ ಬರಮಾಡುವೆನು. ಇಸ್ರಯೇಲಿನ ವೈಭವವು ಅದುಲ್ಲಾಮಿನ ಪಾಲಾಗುವುದು.</verse>
				<verse number="16">ಜುದೇಯದ ನಿವಾಸಿಗಳೇ, ನಿಮ್ಮ ಮಕ್ಕಳು ಅಗಲಿ ಸೆರೆಹೋಗಿದ್ದಾರೆ. ನಿಮ್ಮ ಮುದ್ದು ಮಕ್ಕಳಿಗಾಗಿ ತಲೆಬೋಳಿಸಿಕೊಳ್ಳಿ, ಮುಂಡನ ಮಾಡಿಸಿಕೊಳ್ಳಿ. ನಿಮ್ಮ ಬೋಳುತಲೆಯು ರಣಹದ್ದಿನಂತೆ ನುಣ್ಣಗಿರಲಿ.</verse>
			</chapter>
			<chapter number="2">
				<verse number="1">ತಮ್ಮ ಹಾಸಿಗೆಯಲ್ಲೇ ಕುತಂತ್ರವನ್ನು ಕಲ್ಪಿಸಿಕೊಂಡು ಕೇಡನ್ನು ಬಗೆಯುವವರಿಗೆ ಧಿಕ್ಕಾರ! ಬೆಳಗಾದದ್ದೇ ಅವರು ಕುತಂತ್ರವನ್ನು ಕಾರ್ಯಗತ ಮಾಡುತ್ತಾರೆ. ಆ ಸಾಮರ್ಥ್ಯ ಅವರ ಕೈಯಲ್ಲಿದೆ.</verse>
				<verse number="2">ಇತರರ ಹೊಲಗದ್ದೆಗಳನ್ನು ದುರಾಸೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಅಂತೆಯೇ ಮನೆಗಳನ್ನು ಅಪಹರಿಸುತ್ತಾರೆ. ಈ ರೀತಿಯಲ್ಲಿ ಮನೆಯನ್ನೂ ಮಾಲೀಕನನ್ನೂ ಸ್ವತ್ತನ್ನೂ ಹಕ್ಕುದಾರನನ್ನೂ ತುಳಿದುಬಿಡುತ್ತಾರೆ.</verse>
				<verse number="3">ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಈ ಪೀಳಿಗೆಯ ಮೇಲೆ ನಾನೇ ವಿನಾಶವನ್ನು ಬರಮಾಡುತ್ತೇನೆ. ಆ ಕೇಡಿನಿಂದ ನೀವು ತಲೆತಪ್ಪಿಸಿಕೊಳ್ಳಲಾರಿರಿ. ತಲೆಯೆತ್ತಿ ನಡೆಯಲು ನಿಮಗೆ ಸಾಧ್ಯವಾಗದು. ಕಾಲವು ಅಷ್ಟು ಹದಗೆಟ್ಟಿರುವುದು.</verse>
				<verse number="4">ಆ ದಿನದಲ್ಲಿ ಜನರು ನಿಮ್ಮ ಬಗ್ಗೆ ಪರಿಹಾಸ್ಯಮಾಡಿ, ಲಾವಣಿ ಕಟ್ಟುವರು. “ಅಯ್ಯೋ, ಸಂಪೂರ್ಣವಾಗಿ ಸೂರೆಹೋದೆವಲ್ಲಾ. ಸ್ವಾಮಿ ನಮ್ಮ ಜನರ ಸ್ವತ್ತನ್ನು ಪರಾಧೀನ ಮಾಡಿಬಿಟ್ಟಿರಲ್ಲಾ. ಅಕಟಾ, ನಮ್ಮ ಹೊಲಗದ್ದೆಗಳನ್ನು ಕಸಿದುಕೊಂಡು ದೇವದ್ರೋಹಿಗಳಿಗೆ ಹಂಚಿಕೊಟ್ಟರಲ್ಲಾ!” ಎಂದು ರೋದಿಸುವರು.</verse>
				<verse number="5">ಹೀಗಿರಲು ನೂಲೆಳೆದು ಭೂಮಿಯನ್ನು ಹಂಚಿಕೊಡಲು ಸ್ವಾಮಿಯ ಸಭೆಯಲ್ಲಿ ಯಾರೂ ಇರುವುದಿಲ್ಲ.</verse>
				<verse number="6">ಆಗ ಆ ಕೆಡುಕರು, “ಪ್ರವಾದನೆ ಮಾಡಬೇಡ. ಇಂಥ ವಿಷಯಗಳಲ್ಲಿ ಪ್ರವಾದನೆಯ ಮಾತೆತ್ತಕೂಡದು. ಆ ವಿನಾಶ ನಮಗೆ ತಟ್ಟುವುದಿಲ್ಲ.</verse>
				<verse number="7">ಯಕೋಬ ವಂಶವು ಶಾಪಗ್ರಸ್ತವಾಗಲು ಸಾಧ್ಯವೆ? ಸರ್ವೇಶ್ವರ ತಾಳ್ಮೆಗೆಡುವುದುಂಟೆ? ಇಂಥ ಕೃತ್ಯಗಳನ್ನು ಅವರು ಮಾಡಿಯಾರೆ? ಸನ್ಮಾರ್ಗದಲ್ಲಿ ನಡೆಯುವವರಿಗೆ ಸ್ವಾಮಿಯ ವಾಕ್ಯ ಒಳಿತನ್ನುಂಟುಮಾಡುವುದಿಲ್ಲವೆ?” ಎನ್ನುವರು.</verse>
				<verse number="8">ಅದಕ್ಕೆ ಸರ್ವೇಶ್ವರ: “ಇತ್ತೀಚೆಗೆ ನನ್ನ ಜನರಿಗೆ ನೀವೇ ಶತ್ರುಗಳು. ಜಗಳಮಾಡಲು ಒಪ್ಪದೆ, ಸಮಾಧಾನದಿಂದ ತಿರುಗಾಡುವರ ಮೇಲಂಗಿಯನ್ನು ಕಸಿದುಕೊಳ್ಳುತ್ತೀರಿ.</verse>
				<verse number="9">ನನ್ನ ಜನಾಂಗಕ್ಕೆ ಸೇರಿದ ಮಹಿಳೆಯರನ್ನು ಪ್ರಿಯವಾದ ಅವರ ಗೃಹಗಳಿಂದ ಹೊರದಬ್ಬುತ್ತೀರಿ. ಅವರ ಹಸುಳೆಗಳಿಗೆ ನನ್ನ ಆಶೀರ್ವಾದ ಇನ್ನೆಂದಿಗೂ ಲಭಿಸದಂತೆ ಮಾಡುತ್ತೀರಿ.</verse>
				<verse number="10">ಎದ್ದು ತೊಲಗಿರಿ! ಇದು ನಿಮ್ಮ ನೆಮ್ಮದಿಯ ನೆಲೆಯಲ್ಲ. ನಿಮಗೆ ನಾಶವನ್ನು, ವಿಪರೀತ ನಾಶವನ್ನು ಉಂಟುಮಾಡುವ ಹೊಲಸು ಈ ನಾಡಿಗೆ ಅಂಟಿಕೊಂಡಿದೆ.</verse>
				<verse number="11">“ಗಾಳಿಮಾತಿನಿಂದ ಮೋಸಮಾಡುವಂಥ ಸುಳ್ಳುಗಾರನೊಬ್ಬನು: ‘ದ್ರಾಕ್ಷಾರಸ, ಮದ್ಯಪಾನಗಳ ಕುರಿತು ಪ್ರವಾದನೆ ಮಾಡುತ್ತೇನೆ, ಎಂದು ಹೇಳಿದರೆ ಅಂಥವನೇ ಈ ಜನರಿಗೆ ಸರಿಯಾದ ಪ್ರವಾದಿ ಎನಿಸಿಕೊಳ್ಳುವನು.</verse>
				<verse number="12">“ಯಕೋಬ ವಂಶಜರೇ, ನಾನು ನಿಮ್ಮನ್ನೆಲ್ಲಾ ಖಂಡಿತವಾಗಿ ಒಟ್ಟುಗೂಡಿಸುವೆನು. ಇಸ್ರಯೇಲಿನ ಅಳಿದುಳಿದ ಜನರನ್ನು ಸೇರಿಸಿಯೇ ಸೇರಿಸುವೆನು. ಹಟ್ಟಿಯಲ್ಲಿರುವ ಕುರಿಗಳಂತೆ ಅವರನ್ನು ಒಟ್ಟಿಗೆ ಸೇರಿಸುವೆನು. ಹುಲ್ಲುಗಾವಲಿನಲ್ಲಿರುವ ಕುರಿಮಂದೆಯಂತೆ ಒಂದುಗೂಡಿಸುವೆನು,” ಎನ್ನುತ್ತಾರೆ.</verse>
				<verse number="13">ಬಾಗಿಲನ್ನು ಒಡೆದು ತೆರೆಯುವಂಥವನು ಜನರ ಮುಂದಾಳಾಗಿ ಹೊರಡುವನು; ಅವರೂ ಬಾಗಿಲನ್ನು ಒಡೆದು ನುಗ್ಗುವರು; ಅವರ ಅರಸನು ಮುಂದಾಳಾಗಿ ಹೋಗುವನು. ಸರ್ವೇಶ್ವರಸ್ವಾಮಿಯೇ ಅವರ ಮುಂದಾಳತ್ವವನ್ನು ವಹಿಸುವರು.</verse>
			</chapter>
			<chapter number="3">
				<verse number="1">ಆಗ ನಾನು ಇಂತೆಂದೆನು: “ಯಕೋಬ ವಂಶದ ಮುಖಂಡರೇ, ಇಸ್ರಯೇಲ್ ವಂಶದ ಅಧಿಪತಿಗಳೇ, ಕಿವಿಗೊಟ್ಟು ಕೇಳಿರಿ. ನ್ಯಾಯನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೆ?</verse>
				<verse number="2">ಆದರೂ ನೀವು ಒಳಿತನ್ನು ದ್ವೇಷಿಸುತ್ತೀರಿ. ಕೆಟ್ಟದ್ದನ್ನು ಬಯಸುತ್ತೀರಿ. ನನ್ನ ಜನರ ಚರ್ಮವನ್ನು ಜೀವಸಹಿತ ಸುಲಿಯುತ್ತೀರಿ. ಅವರ ಎಲುಬುಗಳಿಂದ ಮಾಂಸವನ್ನು ಕಿತ್ತು ತಿನ್ನುತ್ತೀರಿ.</verse>
				<verse number="3">ನನ್ನ ಪ್ರಜೆಯ ಮೈ ಚರ್ಮವನ್ನು ಸುಲಿಯುವುದಲ್ಲದೆ ಅವರ ಎಲುಬುಗಳನ್ನು ಮುರಿದುಹಾಕುತ್ತೀರಿ. ಹಂಡೆಯಲ್ಲಿನ ತುಂಡುಗಳಂತೆ, ಆವಿಗೆಯಲ್ಲಿನ ಮಾಂಸದ ಚೂರುಗಳಂತೆ ನನ್ನ ಪ್ರಜೆಯನ್ನು ಚೂರುಚೂರಾಗಿ ಕತ್ತರಿಸಿಹಾಕಿದ್ದೀರಿ.</verse>
				<verse number="4">ಇಷ್ಟೆಲ್ಲಾ ಮಾಡಿದಂಥ ನೀವು ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತೀರಿ. ಆದರೆ ಅವರು ನಿಮಗೆ ಉತ್ತರಕೊಡುವುದಿಲ್ಲ. ಬದಲಿಗೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಿಮಗೆ ವಿಮುಖರಾಗುವರು.”</verse>
				<verse number="5">ಜನರನ್ನು ಸನ್ಮಾರ್ಗದಿಂದ ದುರ್ಮಾರ್ಗಕ್ಕೆ ಎಳೆಯುವ ಪ್ರವಾದಿಗಳಿಗೆ ತಿನ್ನಲು ಏನಾದರೂ ಕೊಟ್ಟರೆ “ಶಾಂತಿ” ಎನ್ನುತ್ತಾರೆ. ಆದರೆ ತಿನ್ನಲು ಯಾರಾದರೂ ಕೊಡದಿದ್ದರೆ ಯುದ್ಧದ ಬೆದರಿಕೆ ಹಾಕುತ್ತಾರೆ.</verse>
				<verse number="6">ಅಂಥ ಪ್ರವಾದಿಗಳಿಗೆ ಸರ್ವೇಶ್ವರ: “ಅಂಧಕಾರ ನಿಮ್ಮನ್ನು ಆವರಿಸುವುದು. ದಿವ್ಯದರ್ಶನ ನಿಮಗೆ ದೊರಕದು. ನಿಮಗೆ ಕತ್ತಲು ಕವಿದಂತಾಗಿ ಕಣಿಹೇಳಲು ಸಾಧ್ಯವಾಗದು. ಸೂರ್ಯ ನಿಮ್ಮ ಪಾಲಿಗೆ ಮುಳುಗಿದಂತೆಯೇ, ಹಗಲು ನಿಮಗೆ ಕಾರ್ಗತ್ತಲೆಯಂತೆಯೆ.”</verse>
				<verse number="7">ಹೀಗಾಗಿ ದಿವ್ಯದರ್ಶಿಗಳಿಗೆ ಅವಮಾನವಾಗುವುದು. ಕಣಿ ಹೇಳುವವರಿಗೆ ನಾಚಿಕೆಯಾಗುವುದು. ಅವರೆಲ್ಲರೂ ಬಟ್ಟೆಯಿಂದ ಬಾಯಿ ಮುಚ್ಚಿಕೊಳ್ಳಬೇಕಾಗುವುದು. ಕಾರಣ, ಅವರಿಗೆ ದೇವರಿಂದ ಯಾವ ಪ್ರತ್ಯುತ್ತರವೂ ಬರದು.</verse>
				<verse number="8">ನಾನಾದರೋ ಸರ್ವೇಶ್ವರಸ್ವಾಮಿಯ ಆತ್ಮಪ್ರೇರಣೆಯಿಂದ, ಅವರ ಬಲಪರಾಕ್ರಮದಿಂದ, ನ್ಯಾಯನೀತಿಯಿಂದ ತುಂಬಿದವನು. ಯಕೋಬ ವಂಶಕ್ಕೆ ಅದರ ದ್ರೋಹವನ್ನು, ಇಸ್ರಯೇಲ್ ವಂಶಕ್ಕೆ ಅದರ ಪಾಪವನ್ನು ಪ್ರಕಟಿಸಲು ಸಮರ್ಥನು.</verse>
				<verse number="9">ನ್ಯಾಯಕ್ಕೆ ಹೇಸಿ, ನೆಟ್ಟಗಿರುವುದನ್ನು ಸೊಟ್ಟಗೆ ಮಾಡುವ ಯಕೋಬ ವಂಶದ ಮುಖಂಡರೆ, ಇಸ್ರಯೇಲ್ ವಂಶದ ಅಧಿಪತಿಗಳೇ, ಗಮನಿಸಿರಿ.</verse>
				<verse number="10">ಸಿಯೋನನ್ನು ನರಹತ್ಯೆಯಿಂದ, ಜೆರುಸಲೇಮನ್ನು ಅನ್ಯಾಯದಿಂದ ಕಟ್ಟುತ್ತಿರುವ ನೀವು ಕಿವಿಗೊಟ್ಟು ಕೇಳಿರಿ.</verse>
				<verse number="11">ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.</verse>
				<verse number="12">ಆದುದರಿಂದ ನಿಮ್ಮ ದೆಸೆಯಿಂದಲೇ ಸಿಯೋನ್ ಪಟ್ಟಣವನ್ನು ಹೊಲದಂತೆ ಉಳಲಾಗುವುದು. ಜೆರುಸಲೇಮ್ ನಗರ ಹಾಳುದಿಬ್ಬವಾಗುವುದು. ದೇವಾಲಯದ ಪರ್ವತ ಕಾಡುಗುಡ್ಡದಂತಾಗುವುದು.</verse>
			</chapter>
			<chapter number="4">
				<verse number="1">ಕಾಲಾಂತ್ಯದೊಳು ಸರ್ವೇಶ್ವರನ ದೇವಾಲಯವಿರುವ ಪರ್ವತ ಬೆಳೆದು ನೆಲೆಗೊಳ್ಳುವುದು ಸರ್ವ ಪರ್ವತಗಳಿಗಿಂತ ಉನ್ನತೋನ್ನತ ಹರಿದು ಬರುವುವಾಗ ಜನಾಂಗಗಳು ಪ್ರವಾಹದಂತೆ ಅದರತ್ತ.</verse>
				<verse number="2">ಈ ಪರಿ ಬಂದ ಹಲವು ನಾಡಿಗರು ಪೇಳ್ವರು ಜನರಿಗೆ; ಬನ್ನಿ, ಹೋಗೋಣ, ಸರ್ವೇಶ್ವರನ ಪರ್ವತಕೆ ಯಕೋಬ್ಯರಾ ದೇವರ ಮಂದಿರಕೆ. ಬೋಧಿಸುವನಾತ ತನ್ನ ಮಾರ್ಗವನು ನಮಗೆ ನಡೆಯುವೆವು ನಾವು ಆತನ ದಾರಿಗನುಗುಣವಾಗ್ಗೆ. ಬರುವುದು ಧರ್ಮೋಪದೇಶ ಸಿಯೋನಿಂದ ಸರ್ವೇಶ್ವರನಾ ವಾಕ್ಯ ಜೆರುಸಲೇಮಿನಿಂದ.</verse>
				<verse number="3">ಬಗೆಹರಿಸುವನಾತ ಹಲವು ರಾಷ್ಟ್ರಗಳಾ ವ್ಯಾಜ್ಯವನು ತೀರಿಸುವನು ಪ್ರಬಲ ಜನಾಂಗಗಳಿಗೆ ನ್ಯಾಯವನು. ಹಾಕುವರವರು ಕುಲುಮೆಗೆ ತಮ್ಮ ಕತ್ತಿಗಳನು ಮಾರ್ಪಡಿಸುವರು ಅವುಗಳನ್ನು ಗುಳಗಳನ್ನಾಗಿ ಭರ್ಜಿಗಳನ್ನೂ ಕುಡುಗೋಲುಗಳನ್ನಾಗಿ.</verse>
				<verse number="4">ನಿಲ್ಲದು ರಾಷ್ಟ್ರಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಅವಶ್ಯವಿರದವಕ್ಕೆ ಯುದ್ಧವಿದ್ಯೆಯ ಕಲಿಕೆ. ಕೂರುವರು ಪ್ರತಿಯೋರ್ವರು ತಂತಮ್ಮ ದ್ರಾಕ್ಷಾಲತೆಗಳಡಿಯಲೆ ಕೂರುವರವರು ತಂತಮ್ಮ ಅಂಜೂರ ಗಿಡಗಳ ನೆರಳಲೆ ಈ ಪರಿ ನುಡಿದಿಹನು ಸೇನಾಧೀಶ್ವರನಾದ ಸರ್ವೇಶ್ವರನೆ.</verse>
				<verse number="5">ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ನಾಮಸ್ಮರಣೆಮಾಡಿ, ಅದರಂತೆ ನಡೆದುಕೊಳ್ಳುತ್ತಾರೆ. ನಾವಾದರೋ ನಮ್ಮ ದೇವರಾದ ಸರ್ವೇಶ್ವರಸ್ವಾಮಿಯ ನಾಮವನ್ನು ಸ್ಮರಿಸಿ ಅದಕ್ಕನುಗುಣವಾಗಿ ಸದಾಕಾಲವೂ ನಡೆದುಕೊಳ್ಳುವೆವು.</verse>
				<verse number="6">ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನಗಳಲ್ಲಿ ನಾನು ಅಂಗಹೀನರಾದವರನ್ನು ಒಟ್ಟುಗೂಡಿಸುವೆನು. ಹೊರದೂಡಲಾದವರನ್ನು ಮತ್ತು ಸಂಕಟಕ್ಕೆ ಈಡಾದವರನ್ನು‍ ಒಂದಾಗಿ ಸೇರಿಸುವೆನು.</verse>
				<verse number="7">ಅಂಗಹೀನ ಜನರನ್ನು ಉದ್ಧರಿಸಿ ಕಾಪಾಡುವೆನು. ಹೊರದೂಡಲಾದ ಪ್ರಜೆಯನ್ನು ಪ್ರಬಲ ರಾಷ್ಟ್ರವನ್ನಾಗಿ ಮಾಡುವೆನು. ಸರ್ವೇಶ್ವರ ಸಿಯೋನ್ ಪರ್ವತದಲ್ಲಿ ಇಂದಿನಿಂದ ಎಂದೆಂದಿಗೂ ಅವರಿಗೆ ಅರಸರಾಗಿರುವರು.”</verse>
				<verse number="8">ಜೆರುಸಲೇಮೇ, ಮಂದೆಗೆ ರಕ್ಷೆಕೊಡುವ ಗೋಪುರವೇ, ಸಿಯೋನ್ ಕುವರಿಯ ಸುಭದ್ರಕೋಟೆಯೇ, ಹಿಂದಿನ ಆಡಳಿತ ನಿನಗೆ ಮರಳಿ ಲಭಿಸುವುದು. ಪ್ರಾಚೀನ ರಾಜ್ಯಾಧಿಕಾರ ಪುನಃ ನಿನಗೆ ದೊರಕುವುದು.</verse>
				<verse number="9">ನೀನೀಗ ರೋದಿಸುವುದೇಕೆ? ಪ್ರಸವವೇದನೆ ಪಡುವವಳಂತೆ ನರಳುವುದೇಕೆ? ನಿನಗೆ ರಾಜನಿಲ್ಲವೇ? ನಿನ್ನ ಸಲಹೆಗಾರ ಸತ್ತುಹೋದನೇ?</verse>
				<verse number="10">ಸಿಯೋನ್ ಕುವರಿಯೇ, ಪ್ರಸವವೇದನೆಯಿಂದ ನರಳಾಡು; ಪಟ್ಟಣವನ್ನು ಬಿಟ್ಟು, ಬಯಲಿನಲ್ಲಿ ವಾಸಮಾಡು. ಬಾಬಿಲೋನಿಗೆ ತೆರಳು. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ನಿನ್ನ ಶತ್ರುಗಳಿಂದ ಸರ್ವೇಶ್ವರ ಬಿಡುಗಡೆ ಮಾಡುವರು.</verse>
				<verse number="11">ಹಲವು ರಾಷ್ಟ್ರಗಳು ನಿನಗೆ ವಿರುದ್ಧ ಕೂಡಿಬಂದು: “ಜೆರುಸಲೇಮನ್ನು ಹೊಲಸುಮಾಡೋಣ, ‘ಸಿಯೋನಿನ ನಾಶವನ್ನು ಕಣ್ಣಾರೆ ನೋಡೋಣ’ ಎನ್ನುತ್ತಿವೆ.</verse>
				<verse number="12">ಆದರೆ ಸರ್ವೇಶ್ವರಸ್ವಾಮಿಯ ಆಲೋಚನೆಗಳನ್ನು ಅವರು ಅರಿತುಕೊಂಡಿಲ್ಲ. ಆ ಸ್ವಾಮಿಯ ಉದ್ದೇಶವನ್ನು ಅವರು ಗ್ರಹಿಸಿಕೊಂಡಿಲ್ಲ; ಕಣಕ್ಕೆ ಹಾಕಿದ ಕಂತೆಗಳಂತೆ ಅವರನ್ನು ಸ್ವಾಮಿ ಸೇರಿಸಿದ್ದಾರೆ ಎಂಬುದನ್ನು ಅವರು ಅರ್ಥೈಸಿಕೊಂಡಿಲ್ಲ.”</verse>
				<verse number="13">ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.”</verse>
			</chapter>
			<chapter number="5">
				<verse number="1">ಸಿಯೋನ್ ನಗರಿಯೇ, ನಿನ್ನ ಸೇನಾವ್ಯೂಹಗಳನ್ನು ಒಟ್ಟುಗೂಡಿಸು. ಇಗೋ, ಶತ್ರುಗಳು ನಮಗೆ ಮುತ್ತಿಗೆಹಾಕಿದ್ದಾರೆ. ಅವರು ಇಸ್ರಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು!</verse>
				<verse number="2">ಎಫ್ರಾತದ ಬೆತ್ಲೆಹೇಮೇ, ಜುದೇಯದ ಕುಲಗಳಲ್ಲಿ ನೀನು ಅತಿಚಿಕ್ಕವಳಾಗಿದ್ದರೂ ಇಸ್ರಯೇಲನ್ನು ಆಳತಕ್ಕವನು ನಿನ್ನಿಂದಲೇ ಉದಯಿಸುವನು. ಆತನ ಗೋತ್ರದ ಮೂಲ ಪುರಾತನವಾದುದು, ಅನಾದಿಕಾಲದಿಂದ ಬಂದುದು.</verse>
				<verse number="3">ಇಂತಿರಲು ದಿನತುಂಬಿದವಳು ಹೆರುವವರೆಗೂ ಸರ್ವೇಶ್ವರ ತನ್ನ ಜನರನ್ನು ಶತ್ರುಗಳ ವಶಕ್ಕೆ ಬಿಟ್ಟುಬಿಡುವರು. ಅನಂತರ ಅಳಿದುಳಿದ ಸಹೋದರರು ಬಂದು ಇಸ್ರಯೇಲ್ ಜನರೊಂದಿಗೆ ಸೇರಿಕೊಳ್ಳುವರು.</verse>
				<verse number="4">ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿ ದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.</verse>
				<verse number="5">ಆತನೇ ನಮಗೆ ಶಾಂತಿದಾತನು, ಅಸ್ಸೀರಿಯದವರು ನಮ್ಮ ಮೇಲೆ ದಾಳಿಮಾಡಿ ಆಕ್ರಮಣ ಮಾಡುವಾಗ, ಅವರಿಗೆ ವಿರುದ್ಧ ಏಳುಮಂದಿ ಪಾಲಕರನ್ನು ಹಾಗೂ ಎಂಟುಮಂದಿ ಪುರುಷೋತ್ತಮರನ್ನು ನೇಮಿಸುವೆನು.</verse>
				<verse number="6">ಅಸ್ಸೀರಿಯದವರು ಇವರ ಶಸ್ತ್ರಾಸ್ತ್ರಗಳಿಗೆ ತುತ್ತಾಗುವರು. ನಿಮ್ರೋದ್ ಸೀಮೆಯ ಪ್ರವೇಶದ್ವಾರಗಳು ಧ್ವಂಸವಾಗುವುವು. ಅಸ್ಸೀರಿಯದವರು ನಮ್ಮ ನಾಡಿಗೆ ನುಗ್ಗಿ ನಮ್ಮ ಕೋಟೆಯನ್ನು ಆಕ್ರಮಿಸುವಾಗ, ಆ ಶಾಂತಿದಾತನು ನಮ್ಮನ್ನು ರಕ್ಷಿಸುವನು.</verse>
				<verse number="7">ಸರ್ವೇಶ್ವರಸ್ವಾಮಿಯ ಕೃಪೆಯಿಂದ ಇಬ್ಬನಿಯೂ ತುಂತುರುಮಳೆಯೂ ಮಾನವನ ನೆರವನ್ನು ನಿರೀಕ್ಷಿಸದೆ, ಹುಲ್ಲನ್ನು ಸಮೃದ್ಧಿಗೊಳಿಸುತ್ತವೆ. ಅಂತೆಯೇ ಯಕೋಬನ ಅಳಿದುಳಿದ ವಂಶದವರು ಹಲವಾರು ಜನಾಂಗಗಳ ಮಧ್ಯೆ ನೆಲಸಿ, ಅವರ ಅಭ್ಯುದಯಕ್ಕೆ ಕಾರಣರಾಗುವರು.</verse>
				<verse number="8">ಸಿಂಹವು ತಿರುಗಾಡುತ್ತಾ ಕಾಡುಮೃಗಗಳನ್ನು ಕಬಳಿಸುತ್ತದೆ. ಪ್ರಾಯದ ಸಿಂಹವು ಓಡಾಡುತ್ತಾ ಸುರಕ್ಷಣೆಯಿಲ್ಲದ ಕುರಿಮಂದೆಗಳನ್ನು ಸೀಳಿಹಾಕುತ್ತದೆ. ಅಂತೆಯೇ ಯಕೋಬನ ಅಳಿದುಳಿದ ಜನರು ದೇಶವಿದೇಶಗಳ ಹಲವಾರು ರಾಷ್ಟ್ರಗಳ ನಡುವೆ ನಾಶಕರವಾಗಿರುವರು.</verse>
				<verse number="9">ಯಕೋಬ ವಂಶಜರೇ, ನಿಮ್ಮ ಎದುರಾಳಿಗಳ ಮೇಲೆ ನಿಮಗೆ ಜಯ ಲಭಿಸಲಿ. ನಿಮ್ಮ ಶತ್ರುಗಳೆಲ್ಲಾ ನಿರ್ಮೂಲವಾಗಲಿ.</verse>
				<verse number="10">ಸರ್ವೇಶ್ವರ ಇಂತೆನ್ನುತ್ತಾರೆ: “ಆ ದಿನದಂದು ಕುದುರೆಗಳನ್ನು ಕಡಿದುಬಿಡುವೆನು. ನಿಮ್ಮ ರಥಗಳನ್ನು ಧ್ವಂಸಮಾಡುವೆನು.</verse>
				<verse number="11">ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು; ನಿಮ್ಮ ಕೋಟೆಕೊತ್ತಲಗಳನ್ನು ಕೆಡವಿಬಿಡುವೆನು.</verse>
				<verse number="12">ನಿನ್ನ ನುರಿತ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು. ನಿನ್ನ ಮಂತ್ರವಾದಿಗಳನ್ನು ನಿರ್ಮೂಲಮಾಡುವೆನು.</verse>
				<verse number="13">ನೀನು ಕೆತ್ತಿದ ವಿಗ್ರಹಗಳನ್ನು ಒಡೆದುಹಾಕಿ, ನೀನು ನಿಲ್ಲಿಸಿದ ಕಲ್ಲುಕಂಬಗಳನ್ನು ಉರುಳಿಸಿಬಿಡುವೆನು. ನಿನ್ನ ಕೈಗೆಲಸವಾದ ವಿಗ್ರಹಗಳನ್ನು ನೀನು ಪೂಜಿಸದಂತೆ ಮಾಡುವೆನು.</verse>
				<verse number="14">ನಿನ್ನ ಆಶೇರಾ ದೇವತೆಯ ವಿಗ್ರಹಗಳನ್ನು ಕಿತ್ತೊಗೆದು, ನಿನ್ನ ಪಟ್ಟಣಗಳನ್ನು ನೆಲಸಮ ಮಾಡುವೆನು.</verse>
				<verse number="15">ನನ್ನ ಮಾತನ್ನು ಕೇಳದ ರಾಷ್ಟ್ರಗಳಿಗೆ ಉಗ್ರಕೋಪದಿಂದ ಮುಯ್ಯಿತೀರಿಸುವೆನು.”</verse>
			</chapter>
			<chapter number="6">
				<verse number="1">ಸರ್ವೇಶ್ವರ ಹೇಳುವುದನ್ನು ಕೇಳಿರಿ: “ಎದ್ದೇಳು; ಬೆಟ್ಟಗಳ ಸಮ್ಮುಖದಲ್ಲಿ ನಿನ್ನ ವ್ಯಾಜ್ಯ ನಡೆಯಲಿ; ನಿನ್ನ ಧ್ವನಿ ಗುಡ್ಡಗಳಿಗೆ ಕೇಳಿಸಲಿ.</verse>
				<verse number="2">“ಬೆಟ್ಟಗಳೇ, ಸರ್ವೇಶ್ವರಸ್ವಾಮಿಯ ಆಪಾದನೆಯನ್ನು ಕೇಳಿರಿ. ಭೂಮಿಯ ಸ್ಥಿರವಾದ ಅಸ್ತಿಭಾರಗಳೇ, ಕಿವಿಗೊಡಿ. ಆ ಸ್ವಾಮಿಗೆ ತನ್ನ ಪ್ರಜೆಯ ಮೇಲೆ ವ್ಯಾಜ್ಯವಿದೆ; ಅವರು ಇಸ್ರಯೇಲಿನ ವಿರುದ್ಧ ವಾದಿಸುವುದನ್ನು ಗಮನಿಸಿರಿ.”</verse>
				<verse number="3">ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಪ್ರಜೆಯೇ, ನಾನು ನಿನಗೇನು ಮಾಡಿದೆ? ಯಾವ ವಿಷಯದಲ್ಲಿ ನಿನಗೆ ಬೇಸರವನ್ನುಂಟುಮಾಡಿದೆ? ಪ್ರಮಾಣವಾಗಿ ಹೇಳು.</verse>
				<verse number="4">ಈಜಿಪ್ಟ್ ದೇಶದಿಂದ ನಾನು ನಿನ್ನನ್ನು ಕರೆತಂದೆ; ದಾಸತ್ವದ ಬಂಧನದಿಂದ ನಿನ್ನನ್ನು ಬಿಡುಗಡೆ ಮಾಡಿದೆ. ನಿನಗೆ ಮೋಶೆ, ಆರೋನ್ ಮತ್ತು ಮಿರ್ಯಾಮಳನ್ನು ನಾಯಕರನ್ನಾಗಿ ಕಳುಹಿಸಿದೆ.</verse>
				<verse number="5">ನನ್ನ ಜನರೇ, ಮೋವಾಬಿನ ಅರಸನಾದ ಬಾಲಾಕನು ಕೊಟ್ಟ ಸಲಹೆಯನ್ನು ನೆನಪಿಗೆ ತಂದುಕೊಳ್ಳಿ. ಬೆಯೋರನ ಮಗನಾದ ಬಿಳಾಮನು ಕೊಟ್ಟ ಉತ್ತರವನ್ನು ಜ್ಞಾಪಿಸಿಕೊಳ್ಳಿ. ನೀವು ತಿಟ್ಟೀಮನ್ನು ಬಿಟ್ಟಂದಿನಿಂದ ಗಿಲ್ಗಾಲನ್ನು ಸೇರುವ ತನಕ ನಡೆದುದನೆಲ್ಲಾ ಸ್ಮರಿಸಿಕೊಳ್ಳಿ. ಆಗ ಸರ್ವೇಶ್ವರ ನಿಮ್ಮನ್ನು ರಕ್ಷಿಸಲು ಮಾಡಿದ ಮಹತ್ಕಾರ್ಯಗಳು ನಿಮಗೆ ಮನದಟ್ಟಾಗುವುವು.”</verse>
				<verse number="6">ನಾನು ಸರ್ವೇಶ್ವರಸ್ವಾಮಿಯ ಸನ್ನಿಧಿಗೆ ಯಾವ ಕಾಣಿಕೆಯೊಂದಿಗೆ ಹೋಗಲಿ? ಮಹೋನ್ನತ ದೇವರಿಗೆ ಹೇಗೆ ಅಡ್ಡಬೀಳಲಿ? ಹೋಮಕ್ಕಾಗಿ, ಒಂದು ವರ್ಷದ ಎಳೆಕರುಗಳನ್ನು ತೆಗೆದುಕೊಂಡುಹೋಗಲೇ?</verse>
				<verse number="7">ಸಾವಿರಾರು ಟಗರುಗಳನ್ನೂ ಧಾರಾಕಾರವಾಗಿ ಹರಿಯುವ ತೈಲಪ್ರವಾಹಗಳನ್ನು ನೋಡಿ ಸರ್ವೇಶ್ವರ ಮೆಚ್ಚುವುದುಂಟೆ? ನಾನು ಮಾಡಿದ ದ್ರೋಹಕ್ಕಾಗಿ ನನ್ನ ಚೊಚ್ಚಲುಮಗನನ್ನೇ ಅರ್ಪಿಸಲೇ? ನನ್ನ ಪಾಪಕ್ಕಾಗಿ ನನ್ನ ಕರುಳ ಕುಡಿಯನ್ನೇ ಬಲಿಕೊಡಲೇ?</verse>
				<verse number="8">ಇಲ್ಲ ಮನುಜಾ, ನಿನಗೆ ಯಾವುದು ಒಳಿತೆಂದು ಸರ್ವೇಶ್ವರ ಈಗಾಗಲೇ ಸ್ಪಷ್ಟಪಡಿಸಿದ್ದಾರೆ: ನ್ಯಾಯನೀತಿಯ ನಡವಳಿಕೆ, ಕರುಣೆಯಲ್ಲಿ ಅಚಲ ಆಸಕ್ತಿ, ದೇವರ ಮುಂದೆ ನಮ್ರತೆ, ಇಷ್ಟನ್ನೇ ಆ ಸ್ವಾಮಿ ನಿನ್ನಿಂದ ಅಪೇಕ್ಷಿಸುವುದು.</verse>
				<verse number="9">ಸರ್ವೇಶ್ವರಸ್ವಾಮಿಯಲ್ಲಿ ಭಯಭಕ್ತಿಯಿಂದಿರುವುದು ಸುಜ್ಞಾನ. ಇದು ಆ ಸ್ವಾಮಿಯ ವಾಣಿ; ಪಟ್ಟಣಕ್ಕೆ ನೀಡುವ ಎಚ್ಚರಿಕೆಯ ಕರೆ:</verse>
				<verse number="10">“ನಗರದ ಸಭಿಕರೇ, ಕೇಳಿ! ಅಕ್ರಮವಾಗಿ ಗಳಿಸಿದ ಆಸ್ತಿ ದುರುಳರ ಮನೆಯಲ್ಲಿರುವುದು ನನಗೆ ಗೊತ್ತಿಲ್ಲವೆ? ಅವರ ಮೋಸದ ಅಳತೆಗಳನ್ನು ನಾನು ಒಪ್ಪುವುದು ಸಾಧ್ಯವೆ?</verse>
				<verse number="11">ಕಳ್ಳ ತಕ್ಕಡಿಗಳಿಂದ ಮೋಸದ ಬಟ್ಟುಗಳಿಂದ ಅಳೆದುಹಾಕುವವನು ನಿರ್ದೋಷಿಯೆಂದು ತೀರ್ಮಾನಿಸಲೆ?</verse>
				<verse number="12">ನಿಮ್ಮ ಧನಿಕರು ಹಿಂಸಾತ್ಮಕರು; ನಿಮ್ಮ ನಿವಾಸಿಗಳು ಸುಳ್ಳುಗಾರರು! ಅವರ ಬಾಯಿಮಾತು ಕಪಟ.</verse>
				<verse number="13">ಆದಕಾರಣ ನಿಮ್ಮನ್ನು ಕಠಿಣವಾಗಿ ದಂಡಿಸುವೆನು. ನಿಮ್ಮ ಪಾಪದ ನಿಮಿತ್ತ ನಾಶವಾಗುವಿರಿ.</verse>
				<verse number="14">ಎಷ್ಟು ತಿಂದರೂ ನಿಮಗೆ ತೃಪ್ತಿಯಾಗದು; ನಿಮ್ಮಲ್ಲಿ ಹಸಿವು ಇದ್ದೇ ಇರುತ್ತದೆ. ನೀವು ಎಷ್ಟು ಕೂಡಿಸಿಟ್ಟರೂ ಅದು ನಿಮಗೆ ಉಳಿಯುವುದಿಲ್ಲ; ಏಕೆಂದರೆ ಉಳಿದುದ್ದನ್ನು ಕದನದಲ್ಲಿ ಹಾಳಾಗಿಸುವೆನು.</verse>
				<verse number="15">ನೀವು ಬೀಜವನ್ನು ಬಿತ್ತಿದರೂ ಬೆಳೆಯನ್ನು ಕೊಯ್ಯಲಾರಿರಿ. ಕಾಳನ್ನು ಗಾಣಕ್ಕೆ ಸುರಿದರೂ ಎಣ್ಣೆಯನ್ನು ತೆಗೆಯಲಾರಿರಿ. ದ್ರಾಕ್ಷಿಯನ್ನು ಆಲೆಮನೆಗೆ ಹಾಕಿದರೂ ದ್ರಾಕ್ಷಾರಸವನ್ನು ಕುಡಿಯಲಾರಿರಿ.</verse>
				<verse number="16">“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”</verse>
			</chapter>
			<chapter number="7">
				<verse number="1">ಅಯ್ಯೋ, ನನ್ನ ಗತಿ ಏನೆಂದು ಹೇಳಲಿ? ಬೇಸಿಗೆಯಲ್ಲಿ ಬೆಳೆಯನ್ನು ಕೊಯ್ಯಲು ಬಂದವನಂತೆ ಇದ್ದೇನೆ. ಹಕ್ಕಲನ್ನು ಆಯ್ದ ಮೇಲೆ ದ್ರಾಕ್ಷಿಹಣ್ಣನ್ನು ಕೊಯ್ಯಲು ಬಂದವನಂತೆ ಇದ್ದೇನೆ. ತಿನ್ನುವುದಕ್ಕೆ ಒಂದು ಗೊಂಚಲು ಸಹ ಉಳಿದಿಲ್ಲ. ನನಗೆ ಇಷ್ಟವಾದ ದೋರೆ ಅಂಜೂರ ಕೂಡ ಸಿಕ್ಕುತ್ತಿಲ್ಲ.</verse>
				<verse number="2">ನಾಡಿನಲ್ಲಿ ದೈವಭಕ್ತರೆಲ್ಲರು ನಾಶವಾದರು; ಸಜ್ಜನರಾರೂ ಉಳಿದಿಲ್ಲ. ಇರುವವರು ಬಲೆಯೊಡ್ಡಿ ಒಬ್ಬರನ್ನೊಬ್ಬರು ಬೇಟೆಯಾಡುತ್ತಾರೆ. ರಕ್ತಪಾತಕ್ಕಾಗಿ ಹೊಂಚುಹಾಕುತ್ತಾರೆ.</verse>
				<verse number="3">ದುಷ್ಕೃತ್ಯಗಳನ್ನು ಮಾಡುವುದರಲ್ಲಿ ಅವರದು ನುರಿತ ಕೈ. ಅಧಿಕಾರಿಗಳು ಮತ್ತು ನ್ಯಾಯಾಧಿಪತಿಗಳು ಲಂಚಕ್ಕಾಗಿ ಕೈಯೊಡ್ಡುತ್ತಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ತಮ್ಮ ಅಂತರಂಗದ ದುರಾಸೆಯನ್ನು ವ್ಯಕ್ತಪಡಿಸುತ್ತಾರೆ. ಎಲ್ಲರು ಒಟ್ಟಿಗೆ ಸೇರಿ ಒಳಸಂಚುಮಾಡುತ್ತಾರೆ.</verse>
				<verse number="4">ಅವರಲ್ಲಿ ಅತ್ಯುತ್ತಮನಾದವನೂ ಮುಳ್ಳಿನ ಪೊದೆಗೆ ಸಮಾನ. ಸತ್ಯವಂತನೂ ಮುಳ್ಳುಬೇಲಿಗಿಂತ ಕಡೆ. ಜನರ ದಂಡನೆಯ ದಿನ ಸಮೀಪಿಸಿದೆ. ಅವರ ಕಾವಲುಗಾರರಾದ ಪ್ರವಾದಿಗಳು ಮುಂತಿಳಿಸಿದ ಕಾಲ ಬಂದಿದೆ. ಜನರೆಲ್ಲರು ದಿಗ್ಭ್ರಾಂತರಾಗುವರು.</verse>
				<verse number="5">ನೆರೆಯವನನ್ನು ನಂಬಬೇಡ, ಆಪ್ತನಲ್ಲಿ ಭರವಸೆ ಇಡಬೇಡ. ನಿನ್ನೊಡನೆ ಮಲಗುವ ಮಡದಿಯೊಂದಿಗೂ ಬಾಯಿಬಿಡಬೇಡ.</verse>
				<verse number="6">ಮಗನು ತಂದೆಯನ್ನು ತುಚ್ಛೀಕರಿಸುವನು; ಮಗಳು ತಾಯಿಗೆ ಎದುರಾಗಿರುವಳು; ಸೊಸೆ ಅತ್ತೆಯೊಂದಿಗೆ ಜಗಳವಾಡುವಳು. ಹೀಗೆ ಮನುಷ್ಯನಿಗೆ ತನ್ನ ಮನೆಯವರೇ ವೈರಿಗಳಾಗುವರು.</verse>
				<verse number="7">ನಾನಾದರೋ ಸರ್ವೇಶ್ವರನ ಕಡೆಗೆ ಕಣ್ಣೆತ್ತಿ ನೋಡುವೆನು. ನನ್ನ ಉದ್ಧಾರಕ ದೇವರನ್ನು ನಿರೀಕ್ಷಿಸಿಕೊಂಡಿರುವೆನು. ನನ್ನ ದೇವರು ನನಗೆ ಕಿವಿಗೊಡುವರು.</verse>
				<verse number="8">ನನ್ನ ಶತ್ರುಗಳೇ, ನನ್ನನ್ನು ನೋಡಿ ಹಿಗ್ಗಬೇಡಿ. ನಾನು ಬಿದ್ದುಹೋದರೂ, ಎದ್ದೇಳುವೆನು; ಕತ್ತಲೆಯಲ್ಲಿ ಕುಳಿತಿದ್ದರೂ ಸರ್ವೇಶ್ವರ ನನಗೆ ಬೆಳಕಾಗುವರು.</verse>
				<verse number="9">ಆ ಸ್ವಾಮಿಗೆ ವಿರುದ್ಧ ನಾನು ಪಾಪಮಾಡಿದ್ದರಿಂದ ಅವರ ಕೋಪವನ್ನು ನಾನು ಸಹಿಸಿಕೊಳ್ಳಬೇಕಾಗುತ್ತದೆ. ಅವರು ನನ್ನ ಪರವಾಗಿ ವಾದಿಸಿ ನನಗಾದ ಅನ್ಯಾಯವನ್ನು ನೀಗಿಸುವರು; ನನ್ನನ್ನು ಕತ್ತಲೆಯಿಂದ ಬೆಳಕಿಗೆ ತರುವರು. ಅವರಿಂದ ಬರುವ ರಕ್ಷಣಾನೀತಿಯನ್ನು ಆಗ ಸವಿಯುವೆನು.</verse>
				<verse number="10">ಇದನ್ನು ನನ್ನ ಶತ್ರುಗಳು ನೋಡುವರು. “ನಿನ್ನ ದೇವರಾದ ಸರ್ವೇಶ್ವರನೆಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.</verse>
				<verse number="11">ಜೆರುಸಲೇಮಿನ ನಿವಾಸಿಗಳೇ, ನಿಮ್ಮ ಕೋಟೆಯ ಗೋಡೆಗಳನ್ನು ಮರಳಿ ಎಬ್ಬಿಸುವ ದಿನ ಬರುವುದು. ಅಂದು ನಿಮ್ಮ ಗಡಿಯ ವಿಸ್ತರಣೆ ಆಗುವುದು.</verse>
				<verse number="12">ಅಂದು ಜನರು ಅಸ್ಸೀರಿಯದಿಂದಲೂ ಈಜಿಪ್ಟಿನಿಂದಲೂ ನಿಮ್ಮ ಬಳಿಗೆ ಬಂದು ಸೇರುವರು. ಸಮುದ್ರದಿಂದ ಸಮುದ್ರದವರೆಗೂ ಪರ್ವತದಿಂದ ಪರ್ವತದವರೆಗೂ ಈಜಿಪ್ಟಿನಿಂದ ಯೂಫ್ರೆಟಿಸ್ ನದಿಯವರೆಗೂ ಚದರಿಹೋಗಿರುವ ಜನರೆಲ್ಲರು ನಿನ್ನೆಡೆಗೆ ಬರುವರು.</verse>
				<verse number="13">ಆದರೆ ನಾಡು ಅದರ ನಿವಾಸಿಗಳ ನಿಮಿತ್ತ ಹಾಗೂ ಅವರ ದುಷ್ಕೃತ್ಯಗಳ ಪರಿಣಾಮವಾಗಿ, ಮರಳುಗಾಡಾಗಿ ಮಾರ್ಪಡುವುದು.</verse>
				<verse number="14">ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ.</verse>
				<verse number="15">ಈಜಿಪ್ಟ್ ದೇಶದಿಂದ ನಮ್ಮನ್ನು ಹೊರತಂದ ದಿನಗಳಲ್ಲಿ ನೀವು ಮಾಡಿದ ಮಹತ್ಕಾರ್ಯಗಳನ್ನು ಮರಳಿ ಮಾಡಿತೋರಿಸಿರಿ.</verse>
				<verse number="16">ಅನ್ಯರಾಷ್ಟ್ರಗಳು ಇವನ್ನು ನೋಡಿ ಅವುಗಳ ಮುಂದೆ ತಮ್ಮ ಶಕ್ತಿಸಾಮರ್ಥ್ಯ ಏನೂ ಇಲ್ಲವೆಂದು ನಾಚಿಕೆಪಟ್ಟು ಬಾಯಮೇಲೆ ಕೈಯಿಟ್ಟುಕೊಳ್ಳುವರು; ಅವರ ಕಿವಿ ಕಿವುಡಾಗುವುದು.</verse>
				<verse number="17">ನೆಲದ ಮೇಲೆ ಹರಿದಾಡುವ ಹಾವುಹಲ್ಲಿಗಳಂತೆ ಅವರು ಮಣ್ಣು ಮುಕ್ಕುವರು; ಗಡಗಡನೆ ನಡುಗುತ್ತಾ ಬಿಲದಿಂದ ಈಚೆ ಬರುವರು. ಸರ್ವೇಶ್ವರ ಎಂಬ ನಮ್ಮ ದೇವರಾದ ನಿಮ್ಮ ಕಡೆಗೆ ಭಯಭಕ್ತಿಯಿಂದ ತಿರುಗಿಕೊಳ್ಳುವರು.</verse>
				<verse number="18">ನಿಮ್ಮಂಥ ದೇವರು ಯಾರಿದ್ದಾರೆ? ತಮ್ಮ ಸ್ವಂತ ಜನರಲ್ಲಿ ಅಳಿದುಳಿದವರ ಅಪರಾಧಗಳನ್ನು ಲೆಕ್ಕಿಸದೆ, ಅವರ ದ್ರೋಹಗಳನ್ನು ಕ್ಷಮಿಸುವಂಥ ದೇವರು ಯಾರಿದ್ದಾರೆ? ನೀವು ನಿತ್ಯಕ್ಕೂ ಕೋಪಿಷ್ಠರಾಗಿರದೆ ಕರುಣೆ ತೋರಿಸುವುದರಲ್ಲೇ ಸಂತುಷ್ಟರಾಗುವಿರಿ.</verse>
				<verse number="19">ಮತ್ತೊಮ್ಮೆ ನಮಗೆ ದಯೆತೋರಿ. ನಮ್ಮ ಅಪರಾಧಗಳನ್ನು ಅಳಿಸಿಬಿಡಿ; ಅವನ್ನು ತುಳಿದು ಸಮುದ್ರದ ತಳಕ್ಕೆ ತಳ್ಳಿಬಿಡಿ.</verse>
				<verse number="20">ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಕಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.</verse>
			</chapter>
		</book>
		<book number="34">
			<chapter number="1">
				<verse number="1">ನಿನೆವೆಯನ್ನು ಕುರಿತ ದೈವೋಕ್ತಿ. ಎಲ್ಕೋಷ್ ಊರಿನ ನಹೂಮ ಪ್ರವಾದಿಗೆ ಆದ ದೈವದರ್ಶನವಿದು:</verse>
				<verse number="2">ಸರ್ವೇಶ್ವರ ಸ್ವಗೌರವವನು ಕಾಪಾಡಿಕೊಳ್ಳುವ ದೇವರು ಮುಯ್ಯಿತೀರಿಸುವ, ಹೌದು, ಕಡುಕೋಪದಿಂದ ಮುಯ್ಯಿತೀರಿಸುವ ದೇವರು. ಸರ್ವೇಶ್ವರ ಮುಯ್ಯಿತೀರಿಸುತ್ತಾರೆ ತನ್ನ ವಿರೋಧಿಗಳಿಗೆ ದೀರ್ಘರೋಷವಿಡುತ್ತಾರೆ, ತಮ್ಮ ಶತ್ರುಗಳ ಮೇಲೆ.</verse>
				<verse number="3">ಸರ್ವೇಶ್ವರ ಶಾಂತಿಸ್ವರೂಪಿ; ಆದರೆ ಆತನ ಶಕ್ತಿ ಅಪಾರ, ಅಪರಾಧಿಗಳನ್ನು ಆತ ಶಿಕ್ಷಿಸದೆ ಬಿಡ; ಗಾಳಿಬಿರುಗಾಳಿಗಳ ನಡುವೆ ಆತನ ಹಾದಿ; ಮೋಡಗಳು ಆತನ ನಡೆಯಿಂದೇಳುವ ಧೂಳಿ.</verse>
				<verse number="4">ಆತನ ಗದರಿಕೆಯೊಂದಕೆ ಬತ್ತಿಹೋಗುತ್ತದೆ ಸಮುದ್ರ; ನಂದಿಹೋಗುತ್ತವೆ ನದಿಸರೋವರ. ಕಂದುತ್ತವೆ ಕಾರ್ಮೆಲ್ ಗುಡ್ಡಗಳು ಬಾಡುತ್ತವೆ ಬಾಷಾನಿನ ಹೊಲಗಳು ಮುದುಡುತ್ತವೆ ಲೆಬನೋನಿನ ಚಿಗುರುಗಳು.</verse>
				<verse number="5">ಆತನೆದುರು ಅದರುತ್ತವೆ ಬೆಟ್ಟಗಳು ಕರಗುತ್ತವೆ ಗುಡ್ಡಗಳು. ಆತನ ದರ್ಶನಕೆ ಕಂಪಿಸುತ್ತದೆ ಭೂಗೋಳವು ತಲ್ಲಣಿಸುತ್ತದೆ ಲೋಕ ಲೋಕನಿವಾಸಿಗಳೆಲ್ಲವು.</verse>
				<verse number="6">ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.</verse>
				<verse number="7">ಒಳ್ಳೆಯವನು ಸರ್ವೇಶ್ವರ ಸಂಕಟದಲಿ ಆಶ್ರಯದುರ್ಗ ಮೊರೆಹೊಕ್ಕವರನು ಚೆನ್ನಾಗಿ ಬಲ್ಲನಾತ.</verse>
				<verse number="8">ನಾಶಗೊಳಿಸುವನು ನಿನೆವೆಯನು ಮಹಾಜಲಪ್ರಳಯದಲ್ಲೋ ಎಂಬಂತೆ ಹಿಂದಟ್ಟಿ ತಳ್ಳುವನು ವಿರೋಧಿಗಳನು ಗಾಢಾಂಧಕಾರಕ್ಕೋ ಎಂಬಂತೆ.</verse>
				<verse number="9">ಸರ್ವೇಶ್ವರನ ವಿರುದ್ಧ ಮಾಡಬಲ್ಲಿರಾ ನೀವು ಕುಯುಕ್ತಿ? ಮರಳಿ ತಲೆಯೆತ್ತದಂತೆ ನಾಶಮಾಡುವನು ನಿಮ್ಮನು ಪೂರ್ತಿಯಾಗಿ.</verse>
				<verse number="10">ಆತನ ವೈರಿಗಳು ಹೆಣೆದುಕೊಂಡಿದ್ದರೂ ಮುಳ್ಳುಗಳಂತೆ ಕುಡಿದು ಮತ್ತರಾಗಿ ಮುಳುಗಿದ್ದರೂ ಮದ್ಯದಲ್ಲೆ ತುತ್ತಾಗುವರು ಬೆಂಕಿಗೆ ತೀರ ಒಣಗಿದ ಕೂಳೆಯಂತೆ.</verse>
				<verse number="11">ನಿನೆವೆಯೇ, ಸರ್ವೇಶ್ವರಸ್ವಾಮಿಗೆ ವಿರುದ್ಧವಾಗಿ ಕುಯುಕ್ತಿಯನ್ನು ಕಲ್ಪಿಸುವವನು ನಿನ್ನಿಂದಲೆ ಹೊರಟಿದ್ದಾನೆ.</verse>
				<verse number="12">ಆ ಸ್ವಾಮಿ ಇಂತೆನ್ನುತ್ತಾನೆ: “ನಿನ್ನ ಶತ್ರುಗಳು ಎಷ್ಟು ಬಲಾಢ್ಯರಾಗಿದ್ದರೂ ಎಷ್ಟು ಅಧಿಕ ಸಂಖ್ಯೆಯಲ್ಲಿದ್ದರೂ ಅವರು ನಾಶಕ್ಕೊಳಗಾಗುವರು; ಆ ದುರಾಲೋಚಕನು ಇಲ್ಲವಾಗುವನು. ನನ್ನ ಜನರೇ, ನಾನು ನಿಮ್ಮನ್ನು ಬಾಧಿಸಿದ್ದುಂಟು, ಆದರೆ ಇನ್ನು ಮುಂದೆ ಬಾಧಿಸುವುದಿಲ್ಲ.</verse>
				<verse number="13">ಆ ಶತ್ರು ನಿಮ್ಮ ಮೇಲೆ ಹೇರಿದ ನೊಗವನ್ನು ಈಗ ನಿಮ್ಮಿಂದ ತೆಗೆದು ಮುರಿದುಬಿಡುವೆನು. ನಿಮ್ಮ ಸಂಕೋಲೆಗಳನ್ನು ಕಿತ್ತುಹಾಕುವೆನು.”</verse>
				<verse number="14">ಅಸ್ಸೀರಿಯವೇ, ಸರ್ವೇಶ್ವರನಾದ ನಾನು ನಿನ್ನ ಬಗ್ಗೆ ಹೊರಡಿಸಿದ ಆಜ್ಞೆ ಏನೆಂದರೆ: ಹೆಸರೆತ್ತಲು ನಿನಗೆ ಸಂತಾನವೇ ಇಲ್ಲದಂತಾಗುವುದು. ನಿನ್ನ ದೇವರುಗಳ ಗುಡಿಗಳಲ್ಲಿರುವ ಕೆತ್ತನೆಯ ವಿಗ್ರಹವನ್ನೂ ಎರಕದ ಬೊಂಬೆಯನ್ನೂ ಒಡೆದುಹಾಕುವೆನು. ನಿನಗೆ ಸಮಾಧಿಯೊಂದನ್ನು ಸಿದ್ಧಗೊಳಿಸುವೆನು; ಏಕೆಂದರೆ ನೀನು ಕೆಡುಕ.”</verse>
				<verse number="15">ಇಗೋ, ಶುಭಸಂದೇಶವನ್ನು ಸಾರಲು ದೂತನೊಬ್ಬನು ಪರ್ವತದಿಂದ ಇಳಿದು ಬರುತ್ತಿದ್ದಾನೆ! ಶಾಂತಿ ಸಮಾಧಾನವನ್ನು ಘೋಷಿಸಲು ತ್ವರೆಪಡುತ್ತಿದ್ದಾನೆ! ಜುದೇಯ ನಾಡೇ, ನಿನ್ನ ಹಬ್ಬಗಳನ್ನು ಆಚರಿಸು. ನಿನ್ನ ಹರಕೆಗಳನ್ನು ಸಲ್ಲಿಸು. ಆ ದುಷ್ಟ ಶತ್ರು ಇನ್ನೆಂದಿಗೂ ನಿನಗೆ ಮುತ್ತಿಗೆಹಾಕಲಾರನು. ಅವನು ಸಂಪೂರ್ಣವಾಗಿ ನಾಶವಾಗಿದ್ದಾನೆ!</verse>
			</chapter>
			<chapter number="2">
				<verse number="1">ನಿನೆವೆಯೇ, ನಿನಗೆದುರಾಗಿ ನಿಂತಿಹನು, ನಿನ್ನನ್ನು ಚದುರಿಸುವವನು! ಕಾವಲಿಡು ಕೋಟೆಯ ಸುತ್ತಲು ಪಹರೆಯಿಡು ದಾರಿ ಕಾಯಲು; ಅಣಿಯಾಗಲಿ ನಿನ್ನ ಸೈನ್ಯವಿಡೀ, ನಡುಕಟ್ಟಿ ನಿಲ್ಲು.</verse>
				<verse number="2">(ಸರ್ವೇಶ್ವರ, ಕೊಳ್ಳೆಗಾರರು ಸುಲಿಗೆಮಾಡಿದ್ದನ್ನೂ ಮುರಿದುಹಾಕಿದ ದ್ರಾಕ್ಷಿಯ ತೋಟಗಳನ್ನೂ ಸರಿಪಡಿಸಲಿದ್ದಾರೆ. ಯಕೋಬಿನ ಮಹತ್ವವನ್ನು ಹಾಗೂ ಇಸ್ರಯೇಲಿನ ಮಹಿಮೆಯನ್ನು ಈಗ ಮತ್ತೆ ಸ್ಥಾಪಿಸಲಿದ್ದಾರೆ).</verse>
				<verse number="3">ಶತ್ರುವಿನ ಶೂರರ ಗುರಾಣಿ ರಕ್ತಗೆಂಪು, ಪರಾಕ್ರಮಿಗಳ ಉಡುಪು ಕಡುಗೆಂಪು. ರಣರಂಗದೊಳು ಥಳಥಳಿಸುತ್ತವೆ ರಥಗಳು ಝಳಪಿಸುತ್ತವೆ ಈಟಿಗಳು. ಕಾಳಗಕ್ಕೆ ಕಾತರದಿಂದಿವೆ ಕುದುರೆಗಳು.</verse>
				<verse number="4">ಹಾದಿಬೀದಿಗಳಲಿ ಓಡಾಡುತ್ತಿವೆ ರಥಗಳು ರಭಸದಿಂದ ನಗರ ಚೌಕಗಳಲ್ಲಿ ಅವು ಅಡ್ಡಾಡುತ್ತವೆ ವೇಗದಿಂದ ಅವು ಬೆಳಗುತ್ತಿವೆ ಪಂಜುಗಳಂತೆ, ಹೊಳೆಯುತ್ತಿವೆ ಮಿಂಚಿನಂತೆ.</verse>
				<verse number="5">ಹಾಜರಾಗಲು ಕರೆಬಂದಿದೆ ಅರಸನಿಂದ ಸೇನಾಪತಿಗಳಿಗೆ; ಎದ್ದುಬಿದ್ದು ಓಡಾಡುತ್ತಿರೆ ಅವರು ಪೌಳಿಗೋಡೆ ಕಡೆಗೆ ಅಡ್ಡ ಗುರಾಣಿಗಳನ್ನೊಡ್ಡುತ್ತಿರೆ ಟಗರು ದಿಮ್ಮಿಗಳಿಗೆ.</verse>
				<verse number="6">ತೆರೆಯಲಾಗಿವೆ ನದಿಯ ದ್ವಾರಗಳು ಕುಸಿದುಬಿದ್ದಿವೆ ಅರಮನೆಯ ಗೋಡೆಗಳು.</verse>
				<verse number="7">ಸೆರೆಹಿಡಿದಿರುವರು ರಾಣಿಯನು; ತಂದಿಹರು ಆಕೆಯನು ಬೈಲಿಗೆ. ದಾಸಿಯರು ಬಡಿದುಕೊಳ್ಳುತಿಹರು ಎದೆ; ರೋದಿಸುತಿಹರು ಪಾರಿವಾಳಗಳಂತೆ.</verse>
				<verse number="8">ನಿನೆವೆ ಕಟ್ಟೆಯೊಡೆದ ಕೆರೆಯಂತಿದೆ; “ನಿಲ್ಲಿರಿ! ನಿಲ್ಲಿರಿ!” ಎಂಬ ಕೂಗು ಕೇಳುತ್ತಿದೆ; ಆದರೂ ಓಡುತಿಹರು ಜನರೆಲ್ಲರು ಹಿಂದೆ ನೋಡದೆ.</verse>
				<verse number="9">ಸೂರೆ ಮಾಡಿರಿ ಅದರ ಬೆಳ್ಳಿಯನು, ಕೊಳ್ಳೆಹೊಡೆಯಿರಿ ಬಂಗಾರವನು. ಮಿತಿಯಿಲ್ಲ ಅದರ ಧನಕನಕಕೆ, ಎಲ್ಲೆಯಿಲ್ಲ ಅದರ ಅಮೂಲ್ಯ ಆಸ್ತಿಪಾಸ್ತಿಗೆ.</verse>
				<verse number="10">ನಿನೆವೆ ಬರಿದಾಗಿದೆ; ಬಟ್ಟಬರಿದಾಗಿ ಪಾಳುಬಿದ್ದಿದೆ; ಎದೆಕರಗಿದೆ, ಮೊಣಕಾಲುಗಳು ಅದರುತ್ತಿವೆ. ಎಲ್ಲರ ಸೊಂಟಗಳು ಮುರಿದಂತಾಗಿವೆ, ಅವರ ಮುಖಗಳು ಬಾಡಿಹೋಗಿವೆ.</verse>
				<verse number="11">ಮೃಗರಾಜನ ಗವಿಯೆಲ್ಲಿ? ಯುವಸಿಂಹಗಳ ಹಕ್ಕೆಯೆಲ್ಲಿ? ಸಿಂಹ ಸಿಂಹಿಣಿಗಳು, ಅವುಗಳ ಮರಿಗಳು ಹೆದರದೆ ತಿರುಗಾಡುತ್ತಿದ್ದ ಎಡೆಯೆಲ್ಲಿ?</verse>
				<verse number="12">ಅಲ್ಲಿ ಸಿಂಹಬೇಟೆಯನ್ನು ಸೀಳಿಹಾಕುತ್ತಿತ್ತು ತನ್ನ ಮರಿಗಳಿಗಾಗಿ; ಕೊರಳುಹಿಡಿದು ಪ್ರಾಣಿಗಳನ್ನು ಹೊಸಕುತ್ತಿತ್ತು ಸಿಂಹಿಣಿಗಳಿಗಾಗಿ; ಗವಿಗಳನ್ನು ಬೇಟೆಯಿಂದ, ಹಕ್ಕೆಗಳನ್ನು ಮಾಂಸದಿಂದ ತುಂಬಿಸುತ್ತಿತ್ತು ಅವುಗಳಿಗಾಗಿ.</verse>
				<verse number="13">ಇಂತೆನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ: “ನಿನಗೆ ವಿರುದ್ಧವಾಗಿದ್ದೇನೆ ನಾನು; ಸುಟ್ಟು ಭಸ್ಮಮಾಡುವೆ ನಿನ್ನ ರಥಗಳನು; ಸಂಹರಿಸಿಬಿಡುವೆನು ನಿನ್ನ ಯುವಸಿಂಹಗಳನು; ನಿನಗೆ ಜಗದಲ್ಲೆಲ್ಲ ಬೇಟೆ ಸಿಗದಂತೆ ಮಾಡುವೆನು; ಯಾರೂ ಕೇಳರು ನಿನ್ನ ರಾಯಭಾರಿಗಳ ಮಾತನು.”</verse>
			</chapter>
			<chapter number="3">
				<verse number="1">ಧಿಕ್ಕಾರ ರಕ್ತಮಯವಾದ ನಗರಕೆ! ತುಂಬಿದೆ ಅದರಲಿ ಸುಳ್ಳು ಮತ್ತು ಸುಲಿಗೆ ನಿಲ್ಲದೆ ನಡೆಯುತ್ತಿದೆ ಅದರಲಿ ಕೊಳ್ಳೆ.</verse>
				<verse number="2">ಕೇಳಿ, ಚಕ್ರಗಳ‍ ಚೀತ್ಕಾರ, ಚಾಟಿಗಳ ಚಟಪಟ; ಕುದುರೆಗಳ ಭರದೌಡು, ರಥಗಳ ಹಾರಾಟ.</verse>
				<verse number="3">ರಾಹುತರ ರಭಸ, ಕತ್ತಿಯ ಥಳಥಳಿಪು, ಈಟಿಯ ಝಳಿಪು; ಹತರಾದವರು ಅಗಣಿತ, ಸತ್ತವರು ಅಸಂಖ್ಯಾತ, ಶವಗಳ ರಾಶಿ ವಿಪರೀತ; ನುಗ್ಗುವವರು ಎಡವುತಿಹರು ಹೆಣಗಳನು ದಾಟಿಹೋಗುತ.</verse>
				<verse number="4">ಇದೆಲ್ಲ ಆಗುವುದು ಅಮಿತ ಹಾದರದ ನಿಮಿತ್ತ ರಾಷ್ಟ್ರಗಳನು ತನ್ನ ಬೆಡಗು ಬಿನ್ನಾಣಗಳಿಂದ ಜಾರತನಕ್ಕೂ ಗುಲಾಮತನಕ್ಕೂ ಆಕೆ ತಂದುದರಿಂದ.</verse>
				<verse number="5">ಇಂತೆನ್ನುತ್ತಾರೆ ಸರ್ವಶಕ್ತ ಸರ್ವೇಶ್ವರ: “ನಿನೆವೆ, ನಿನಗೆ ನಾ ವಿರೋಧಿಯಾಗಿರುವೆನು ಬಿಚ್ಚಿ ಮುಖದ ಮೇಲೆತ್ತುವೆನು ನಿನ್ನ ನೆರಿಗೆಗಳನು ಜನಾಂಗಗಳಿಗೆ ತೋರಿಸುವೆನು ನಿನ್ನ ಬೆತ್ತಲೆತನವನು ರಾಜ್ಯಗಳಿಗೆ ಕಾಣಿಸುವೆನು ನಿನ್ನ ಅವಮಾನವನು.</verse>
				<verse number="6">ಎಸೆಯುವೆನು ನಿನ್ನ ಮೇಲೆ ಹೊಲಸನು ಕಳೆಯುವೆನು ನಿನ್ನ ಮಾನವನು ಪರಿಹಾಸ್ಯಕ್ಕೀಡುಮಾಡುವೆನು ನಿನ್ನನು.</verse>
				<verse number="7">ನಿನ್ನ ನೋಡುವವರು ನಿನ್ನಿಂದ ದೂರ ಓಡುವರು “ನಿನೆವೆ ಹಾಳುಬಿದ್ದಿದೆ, ಅದಕ್ಕೆ ಗೋಳಿಡುವರಾರು? ಅದನ್ನು ಸಂತೈಸುವವರು ನಮಗೆಲ್ಲಿ ಸಿಕ್ಕಿಯಾರು?, ಎಂದುಕೊಳ್ಳುವರು.”</verse>
				<verse number="8">“ನೀನು ತೇಬೆಸ್ಸಿಗಿಂತ ಸುಭದ್ರಳೋ? ಅದು ನೈಲಿನ ಪ್ರವಾಹಗಳಲ್ಲಿ ನೆಲೆಯಾಗಿತ್ತು. ನೀರು ಅದನ್ನು ಸುತ್ತಿಕೊಂಡಿತ್ತು. ಮಹಾನದಿ ಅದಕ್ಕೆ ಕೋಟೆಯಾಗಿತ್ತು. ಜಲಾಶಯವು ಅದರ ದುರ್ಗವಾಗಿತ್ತು.</verse>
				<verse number="9">ಸುಡಾನ್ ಮತ್ತು ಈಜಿಪ್ಟ್ ಅದಕ್ಕೆ ಬೆಂಬಲವಾಗಿದ್ದವು. ಪೂಟ್ ಮತ್ತು ಲಿಬ್ನ ಅದಕ್ಕೆ ಮಿತ್ರನಾಡುಗಳಾಗಿದ್ದವು</verse>
				<verse number="10">ಆದರೂ ತೇಬೆಸ್ ನಗರವು ಗಡೀಪಾರಾಗಿ ಸೆರೆಹೋಯಿತು. ಅದರ ಮಕ್ಕಳನ್ನು ಬೀದಿಬೀದಿಯ ಮೂಲೆಗಳಲ್ಲಿ ಬಂಡೆಗಳಿಗೆ ಅಪ್ಪಳಿಸಲಾಯಿತು. ಅದರ ಪ್ರಮುಖರನ್ನು ಬಂಧಿಸಿ ಕೊಂಡೊಯ್ದು, ಚೀಟುಹಾಕಿ ಹಂಚಿಕೊಳ್ಳಲಾಯಿತು.</verse>
				<verse number="11">“ನಿನೆವೆಯೇ, ನೀನು ಸಹ ಮತ್ತಳಾಗಿ ತತ್ತರಿಸುವೆ. ಶತ್ರುಗಳಿಂದ ಆಶ್ರಯ ಕೋರುವೆ.</verse>
				<verse number="12">ನಿನ್ನ ಕೋಟೆಗಳೆಲ್ಲ ಮೊತ್ತಮೊದಲು ಮಾಗಿದ ಹಣ್ಣುಗಳುಳ್ಳ ಅಂಜೂರದ ಮರಗಳಂತಿವೆ. ಆ ಮರಗಳನ್ನು ಅಲ್ಲಾಡಿಸಿದ್ದೇ ಆದರೆ ಹಣ್ಣುಗಳು ಬೀಳುವುವು. ತಿನ್ನುವವರ ಬಾಯಿಗೆ,</verse>
				<verse number="13">ನಿನ್ನ ಯೋಧರನ್ನು ನೋಡು; ಅವರೆಲ್ಲ ಹೆಣ್ಣಿಗರು. ನಿನ್ನ ದೇಶದ ದ್ವಾರಗಳು ಶತ್ರುಗಳಿಗೆ ತೆರೆದ ಬಾಗಿಲುಗಳು. ಅದರ ಕಬ್ಬಿಣದ ಅಗುಳಿಗಳು ಬೆಂಕಿಯಿಂದ ಭಸ್ಮವಾದವು.</verse>
				<verse number="14">ಮುತ್ತಿಗೆಯ ಕಾಲಕ್ಕೆ ನೀರನ್ನು ಸೇದಿ ಶೇಖರಿಸಿಡು. ನಿನ್ನ ಕೋಟೆಯನ್ನು ಭದ್ರಪಡಿಸು. ಮಣ್ಣಿಗೆ ಇಳಿ; ಜೇಡಿಯನ್ನು ತುಳಿ; ಇಟ್ಟಿಗೆಯ ಅಚ್ಚನ್ನು ಹಿಡಿ.</verse>
				<verse number="15">ನೀನು ಇದ್ದಲ್ಲಿಯೇ ಬೆಂಕಿ ನಿನ್ನನ್ನು ಕಬಳಿಸುವುದು. ಕತ್ತಿಯು ನಿನ್ನನ್ನು ಕಡಿದುಬಿಡುವುದು. ಮಿಡತೆಗಳು ಬೆಳೆಯನ್ನು ನುಂಗುವಂತೆ ಶತ್ರುಗಳು ನಿನ್ನನ್ನು ನುಂಗಿಬಿಡುವರು. “ನಿನ್ನ ಜನರು ಮಿಡತೆಗಳಂತೆ ಅಸಂಖ್ಯಾತರಾಗಲಿ! ಗುಂಪುಮಿಡತೆಗಳಂತೆ ಅಪರಿಮಿತರಾಗಲಿ!</verse>
				<verse number="16">ನಿನ್ನ ವರ್ತಕರು ಆಕಾಶದ ನಕ್ಷತ್ರಗಳಿಗಿಂತ ಅಧಿಕವಾಗಲಿ! ಆದರೆ ಈಗ ಮಿಡತೆ ತನ್ನ ಪರೆಯನ್ನು ಬಿಟ್ಟು ಹಾರಿಹೋಗುವಂತೆ ಎಲ್ಲರು ಪಲಾಯನವಾಗಲಿ!</verse>
				<verse number="17">ನಿನ್ನ ಪಹರೆಯವರು ಮಿಡತೆಗಳಂತೆ, ನಿನ್ನ ಸೇನಾಧಿಪತಿಗಳು ಗುಂಪು ಮಿಡತೆಗಳಂತೆ ಇದ್ದಾರೆ. ಚಳಿಗಾಲದಲ್ಲಿ ಅವು ಬೇಲಿಯ ಮರೆಯಲ್ಲಿರುತ್ತವೆ. ಹೊತ್ತು ಹುಟ್ಟಿದಾಗ ಯಾರಿಗೂ ತಿಳಿಯದ ಸ್ಥಳಕ್ಕೆ ಹಾರಿಹೋಗುತ್ತವೆ.</verse>
				<verse number="18">“ಅಸ್ಸೀರಿಯಾದ ಅರಸನೇ, ನಿನ್ನ ರಾಜ್ಯಪಾಲರು ದೀರ್ಘನಿದ್ರೆಯಲ್ಲಿದ್ದಾರೆ. ನಿನ್ನ ಪ್ರಮುಖರು ಜಡವಾಗಿ ಬಿದ್ದಿದ್ದಾರೆ. ನಿನ್ನ ಪ್ರಜೆಗಳು ಬೆಟ್ಟಗುಡ್ಡಗಳಲ್ಲಿ ಚದರಿಹೋಗಿದ್ದಾರೆ. ಅವರನ್ನು ಒಟ್ಟುಗೂಡಿಸತಕ್ಕವರು ಯಾರೂ ಇಲ್ಲದಿದ್ದಾರೆ.</verse>
				<verse number="19">ನಿನ್ನ ಗಾಯಕ್ಕೆ ಮದ್ದಿಲ್ಲ. ನಿನಗೆ ಬಿದ್ದಿರುವ ಪೆಟ್ಟು ಪ್ರಾಣನಾಶಕ. ನಿನ್ನ ವಿನಾಶದ ಸಮಾಚಾರವನ್ನು ಕೇಳುವವರೆಲ್ಲ ಚಪ್ಪಾಳೆ ಹಾಕುತ್ತಾರೆ. ಏಕೆಂದರೆ ನೀನು ಮಾಡಿರುವ ಕೇಡಿಗೆ ಕೊನೆಯಿಲ್ಲ. ಅದರಿಂದ ತಪ್ಪಿಸಿಕೊಂಡವರು ಯಾರೂ ಇಲ್ಲ.”</verse>
			</chapter>
		</book>
		<book number="35">
			<chapter number="1">
				<verse number="1">ಪ್ರವಾದಿ ಹಬಕ್ಕೂಕನಿಗೆ ಪ್ರಕಟಿಸಲಾದ ದೈವೋಕ್ತಿ:</verse>
				<verse number="2">ನಾನೆಷ್ಟು ಕಾಲ ಸರ್ವೇಶ್ವರಾ, ಮೊರೆ ಇಡುತ್ತಿರಬೇಕು ನಿನಗೆ? ನೀನೆಷ್ಟು ಕಾಲ ಸುಮ್ಮನಿರುವೆ ಕಿವಿಗೊಡದೆ ನನಗೆ? ಹಿಂಸೆಯಾಗುತ್ತಿದೆಯೆಂದು ನಾ ಕೂಗಿದೆ; ಆದರೂ ನೀ ಸುಮ್ಮನಿರುವೆ, ರಕ್ಷಣೆ ನೀಡದೆ.</verse>
				<verse number="3">ಕೇಡನ್ನು ನಾ ನೋಡುವಂತೆ ಮಾಡಿದೆಯೇಕೆ? ಕಷ್ಟವನ್ನು ನಾ ಕಾಣುವಂತೆ ಮಾಡಿದೆಯೇಕೆ? ಹಿಂಸೆಬಾಧೆಗಳು ಇವೆ ನನ್ನ ಕಣ್ಣ ಮುಂದೆ. ಇಗೋ, ಜಗಳ ನಡೆಯುತಿದೆ, ವ್ಯಾಜ್ಯವೇಳುತಿದೆ.</verse>
				<verse number="4">ಜಡವಾಗಿಹೋಗಿದೆ ಧರ್ಮಶಾಸ್ತ್ರ; ಸ್ತಬ್ಧವಾಗಿದೆ ನ್ಯಾಯನೀತಿಯ ಚಕ್ರ. ಸಜ್ಜನರಿಗಿಂತ ದುರ್ಜನರ ಕೈ ಮೇಲಾಗಿದೆ; ಎಂದೇ ನ್ಯಾಯನೀತಿ ತಲೆಕೆಳಗಾಗಿದೆ.</verse>
				<verse number="5">ಆಗ ಸರ್ವೇಶ್ವರ ತಮ್ಮ ಜನರಿಗೆ ಇಂತೆಂದರು: “ಜನಾಂಗಗಳ ಮಧ್ಯೆ ನಡೆಯುವುದನ್ನು ನೋಡಿರಿ. ನೋಡಿದರೆ ಬೆಕ್ಕಸಬೆರಗಾಗುವಿರಿ. ನಿಮ್ಮ ಕಾಲದಲ್ಲೇ ನಾನೊಂದು ಕಾರ್ಯವನ್ನು ಮಾಡುವೆನು. ಅದನ್ನು ಕುರಿತು ನೀವು ಕಿವಿಯಾರೆ ಕೇಳಿದರೂ ನೀವು ನಂಬುವುದಿಲ್ಲ.</verse>
				<verse number="6">ಇಗೋ, ಬಾಬಿಲೋನಿನವರನ್ನು ಹುರಿದುಂಬಿಸಲಿದ್ದೇನೆ. ಅವರು ಭಯೋತ್ಪಾದಕರು ಹಾಗೂ ಉಗ್ರಗಾಮಿಗಳು. ಅವರು ಜಗದ ಉದ್ದಗಲಕ್ಕೂ ಹರಡಿ ತಮ್ಮದಲ್ಲದ ನಾಡುಗಳನ್ನು ಆಕ್ರಮಿಸಿಕೊಳ್ಳಲು ಸಂಚರಿಸುವರು.</verse>
				<verse number="7">ಅವರು ಕ್ರೂರಿಗಳು, ಭಯಂಕರರು. ತಮ್ಮದೇ ಆದ ನ್ಯಾಯನೀತಿಯನ್ನು ರೂಪಿಸಿಕೊಳ್ಳುವಂಥವರು; ತಮ್ಮನ್ನು ತಾವೇ ಗೌರವಿಸಿಕೊಳ್ಳುವ ಅಹಂಭಾವಿಗಳು.</verse>
				<verse number="8">“ಅವರ ಕುದುರೆಗಳು ಚಿರತೆಗಳಿಗಿಂತ ಬಿರುಸು; ಹಸಿದ ತೋಳಗಳಿಗಿಂತ ಚುರುಕು. ಅವರ ರಾಹುತರು ರಭಸದಿಂದ ಹಾರಿಬರುವರು. ಬೇಟೆಯನ್ನು ಕಬಳಿಸಲು ಕಾತರದಿಂದ ಹಾರುವ ರಣಹದ್ದಿನಂತೆ ದೂರದಿಂದ ಧಾವಿಸಿಬರುವರು.</verse>
				<verse number="9">ಹಿಂಸೆ ಬಾಧೆಯನ್ನು ಗುರಿಯಾಗಿ ಇಟ್ಟುಕೊಂಡೇ ಮುನ್ನುಗ್ಗಿಬರುವರು. ಮರಳಿನ ಕಣಗಳಂತೆ ಲೆಕ್ಕವಿಲ್ಲದಷ್ಟು ಜನರನ್ನು ಸೆರೆ ಹಿಡಿಯುವರು.</verse>
				<verse number="10">“ಅವರು ಅರಸರನ್ನು ಅಪಹಾಸ್ಯಮಾಡುವರು; ಅಧಿಪತಿಗಳನ್ನು ಪರಿಹಾಸ್ಯಕ್ಕೆ ಗುರಿಮಾಡುವರು. ಕೋಟೆಗಳನ್ನು ಧೂಳೀಪಟ ಮಾಡುವರು. ಮಣ್ಣುಗುಡ್ಡೆ ಹಾಕಿ ಆಕ್ರಮಿಸಿಕೊಳ್ಳುವರು.</verse>
				<verse number="11">ಬಿರುಗಾಳಿಯಂತೆ ಬಂದು ಮಾಯವಾಗುವವರು ಅವರು; ಸ್ವಂತ ಶಕ್ತಿಯೇ ದೈವ ಎಂದೆಣಿಸುವಂಥ ಅಪರಾಧಿಗಳು.”</verse>
				<verse number="12">ಸರ್ವೇಶ್ವರಾ, ನನ್ನ ದೇವರೇ, ಪರಮಪಾವನ ಸ್ವಾಮಿಯೇ, ಅನಾದಿಯಿಂದ ಇರುವಂಥವರು ನೀವು. ನಾವು ಖಂಡಿತ ಸಾಯುವುದಿಲ್ಲ. ನಮ್ಮನ್ನು ದಂಡಿಸುವಂತೆ ಆ ಬಾಬಿಲೋನಿನವರನ್ನು ನೇಮಿಸಿದವರು ನೀವು; ಅವರನ್ನು ಪ್ರಬಲಗೊಳಿಸಿದವರು ನೀವು. ನಮಗೆ ಪೊರೆಬಂಡೆ ನೀವೇ.</verse>
				<verse number="13">ಕೇಡನ್ನು ನೋಡಲಾರದಷ್ಟು ನಿಷ್ಕಳಂಕ ನಿಮ್ಮ ಕಣ್ಣು. ಕೆಡುಕನ್ನು ಸಹಿಸಲಾಗದಸ್ಟು ಪವಿತ್ರರು ನೀವು. ಇಂತಿರಲು ಕೆಡುಕನ್ನು ನೋಡಿಕೊಂಡಿರುವಿರೇಕೆ? ದುಷ್ಟನು ಶಿಷ್ಟನಾದವನನ್ನು ಕಬಳಿಸುತ್ತಿರುವುದನ್ನು ನೋಡಿ ಸುಮ್ಮನಿರುವಿರೇಕೆ?</verse>
				<verse number="14">ಮನುಜರನ್ನು ಕಡಲ ಮೀನುಗಳಿಗೆ ಸಮನಾಗಿಸಿರುವಿರಿ, ಏಕೆ?</verse>
				<verse number="15">ಈ ಕಾರಣ ಆ ಬಾಬಿಲೋನಿಯರು ಮಾನವರನ್ನು ಗಾಳದಿಂದ ಸೆಳೆದುಕೊಳ್ಳುತ್ತಾರೆ; ಬಲೆಯಿಂದ ಬಾಚಿಕೊಳ್ಳುತ್ತಾರೆ; ತಮ್ಮ ಜಾಲದಲ್ಲಿ ರಾಶಿಹಾಕಿಕೊಳ್ಳುತ್ತಾರೆ; ಹಿರಿಹಿರಿ ಹಿಗ್ಗುತ್ತಾರೆ.</verse>
				<verse number="16">ತಮ್ಮ ಬಲೆಗೆ ಬಲಿಕೊಡುತ್ತಾರೆ; ಧೂಪ ಹಾಕುತ್ತಾರೆ. ಅವುಗಳ ಮೂಲಕವೇ ಅವರ ಜೀವನ ಗಟ್ಟಿ; ಅವರ ಭೋಜನ ಪುಷ್ಟಿ.</verse>
				<verse number="17">ಹೀಗೆ ಅವರು ನಿರಂತರವಾಗಿ ತಮ್ಮ ಬಲೆಯಿಂದ ಭಾಗ್ಯವನ್ನು ಪಡೆದುಕೊಳ್ಳುತ್ತಿರಬೇಕೋ? ದಯದಾಕ್ಷಿಣ್ಯವಿಲ್ಲದೆ ರಾಷ್ಟ್ರಗಳನ್ನು ನಾಶಮಾಡುತ್ತಿರಬೇಕೋ?</verse>
			</chapter>
			<chapter number="2">
				<verse number="1">“ನಾನು ಕಾವಲುಗಾರನಾಗಿ ನಿಲ್ಲುವೆನು. ಕಾವಲುಗೋಪುರವನ್ನೇ ಹತ್ತಿ ನಿಂತುಕೊಳ್ಳುವೆನು. ಸರ್ವೇಶ್ವರ ನನಗೆ ಏನು ಹೇಳುವರೋ, ಯಾವ ಉತ್ತರ ಕೊಡುವರೋ, ಎಂದು ಎದುರುನೋಡುವೆನು.”</verse>
				<verse number="2">ಆಗ ಸರ್ವೇಶ್ವರ ನನಗೆ ಕೊಟ್ಟ ಉತ್ತರ ಇದು: “ನೀನು ಕಂಡ ದರ್ಶನವನ್ನು ಬರೆ. ಓದುವವನು ಶೀಘ್ರವಾಗಿ ಓದುವಂತೆ ಹಲಗೆಗಳ ಮೇಲೆ ಅದನ್ನು ಕೆತ್ತು.</verse>
				<verse number="3">ನಿಯಮಿತ ಕಾಲದಲ್ಲಿ ಆ ದರ್ಶನ ನೆರವೇರುವುದು. ಅದರ ಅಂತಿಮ ಪರಿಣಾಮ ಶೀಘ್ರದಲ್ಲಿ ಗೊತ್ತಾಗುವುದು. ತಡವಾದರೂ ಕಾದಿರು; ಮೋಸಮಾಡದು. ಅದು ಖಂಡಿತವಾಗಿ ಕೈಗೂಡುವುದು; ತಾಮಸವಾಗದು.</verse>
				<verse number="4">ನೋಡು, ನೇರಮನಸ್ಕನಲ್ಲದವನು, ಉಬ್ಬಿಹೋಗಿರುವ ಆ ದುರ್ಜನನು ಉಳಿಯನು; ದೇವರೊಂದಿಗೆ ಸತ್ಸಂಬಂಧ ಹೊಂದಿರುವ ಸಜ್ಜನನು ವಿಶ್ವಾಸದಿಂದಲೇ ಬಾಳುವನು.</verse>
				<verse number="5">ಐಶ್ವರ್ಯ ಮೋಸಕರ, ಮದವೇರಿದವನು ಮತ್ತನಾದವನಂತೆ ಅಸ್ಥಿರ. ಅವನ ಅತಿಯಾಸೆ ಪಾತಾಳದಷ್ಟು ವಿಶಾಲ. ಮೃತ್ಯುವಿನಂತೆ ಅವನಿಗೆ ತೃಪ್ತಿಯೇ ಇಲ್ಲ. ಸಕಲ ಜನಾಂಗಗಳನ್ನು ಬಲೆಯೊಳಗೆ ಎಳೆದುಕೊಳ್ಳುತ್ತಾನೆ. ಸಮಸ್ತ ಜನಾಂಗಗಳನ್ನು ರಾಶಿಮಾಡಿಕೊಳ್ಳುತ್ತಾನೆ.</verse>
				<verse number="6">ಆದರೆ ಹೀಗೆ ಅವನಿಂದ ಆಕರ್ಷಿತರಾದವರೆಲ್ಲ ಅವನ ಸಮಾಚಾರವೆತ್ತಿ ಗೇಲಿಯ ಲಾವಣಿಕಟ್ಟುವರು. “ತನ್ನದಲ್ಲದನ್ನು ಹೆಚ್ಚು ಹೆಚ್ಚಾಗಿ ತುಂಬಿಸಿಕೊಂಡವನಿಗೆ ಧಿಕ್ಕಾರ! ಬಡ್ಡಿಗಾಗಿ ಅಡವಿಟ್ಟ ವಸ್ತುಗಳನ್ನು ರಾಶಿಮಾಡಿಕೊಂಡವನಿಗೆ ಧಿಕ್ಕಾರ! ಎಷ್ಟುಕಾಲ ಹೀಗೆ ಮಾಡಿಯಾನು?’</verse>
				<verse number="7">ನಿನ್ನ ಸಾಲಗಾರರೇ ತಟ್ಟನೆ ನಿನಗೆದುರಾಗಿ ನಿಲ್ಲುವರು; ಬಾಕಿದಾರರೇ ಎಚ್ಚೆತ್ತು ನಿನಗೆ ಬೆದರಿಕೆ ಹಾಕುವರು. ಕೊಳ್ಳೆಹೊಡೆದು ನಿನ್ನನ್ನು ಲೂಟಿಮಾಡುವರು.</verse>
				<verse number="8">ನೀನು ಅನೇಕ ಜನಾಂಗಗಳನ್ನು ಕೊಳ್ಳೆಹೊಡೆದಿರುವೆ. ಜನರ ರಕ್ತವನ್ನು ಸುರಿಸಿರುವೆ. ನಾಡುಗಳನ್ನೂ ನಗರಗಳನ್ನೂ ಅವುಗಳ ನಿವಾಸಿಗಳನ್ನೂ ಹಿಂಸಿಸಿರುವೆ. ಈ ಕಾರಣ, ಜನಾಂಗಗಳಲ್ಲಿ ಅಳಿದುಳಿದವರೆಲ್ಲರು ನಿನ್ನನ್ನು ಕೊಳ್ಳೆಹೊಡೆಯುವರು.</verse>
				<verse number="9">ಕೇಡಿನಿಂದ ತಪ್ಪಿಸಿಕೊಳ್ಳುವ ಸಲುವಾಗಿ ನಿನ್ನ ನಿವಾಸವನ್ನು ಎತ್ತರವಾಗಿ ಕಟ್ಟಿಕೊಂಡೆ. ನಿನ್ನ ಕುಟುಂಬಕ್ಕಾಗಿ ಇತರರ ಆಸ್ತಿಯನ್ನು ಅನ್ಯಾಯವಾಗಿ ದೋಚಿಕೊಂಡೆ, ನಿನ್ನಗೆ ಧಿಕ್ಕಾರ!</verse>
				<verse number="10">ನಿನ್ನ ಯೋಜನೆಗಳಿಂದ ನಿನ್ನ ಮನೆತನಕ್ಕೆ ಅಪಕೀರ್ತಿ ತಂದುಕೊಂಡಿರುವೆ. ಹಲವಾರು ನಾಡುಗಳನ್ನು ನಿರ್ಮೂಲಮಾಡಿ ನಿನ್ನ ವಂಶಕ್ಕೆ ವಿನಾಶವನ್ನು ಬರಮಾಡಿಕೊಂಡಿರುವೆ.</verse>
				<verse number="11">ಗೋಡೆಯಲ್ಲಿ ಇರುವ ಕಲ್ಲುಗಳೇ ನಿನಗೆ ವಿರುದ್ಧವಾಗಿ ಕೂಗುವುವು. ಚಾವಣಿಯ ತೊಲೆಗಳು ಸಹ ಅದಕ್ಕೆ ಮಾರ್ದನಿ ಕೂಡಿಸುವುವು.</verse>
				<verse number="12">ನರಹತ್ಯೆಯಿಂದ ನಗರಗಳನ್ನು ನಿರ್ಮಿಸುವವನಿಗೆ ಧಿಕ್ಕಾರ! ಅನ್ಯಾಯವಾದ ಅಸ್ತಿವಾರದ ಮೇಲೆ ಊರನ್ನು ಕಟ್ಟುವವನಿಗೆ ಧಿಕ್ಕಾರ!</verse>
				<verse number="13">ಜನರು ದುಡಿದದ್ದು ಬೆಂಕಿಗೆ ತುತ್ತಾಗುವುದು. ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥವಾಗುವುದು. ಇದೆಲ್ಲ ಸೇನಾಧೀಶ್ವರ ಸರ್ವೇಶ್ವರನ ಚಿತ್ತವಷ್ಟೆ.</verse>
				<verse number="14">ಸಮುದ್ರವು ನೀರಿನಿಂದ ತುಂಬಿ ಇರುವಂತೆ ಜಗವು ಸರ್ವೇಶ್ವರಸ್ವಾಮಿಯ ಮಹಿಮೆಯ ಜ್ಞಾನದಿಂದ ತುಂಬಿರುವುದು.</verse>
				<verse number="15">ನಿನ್ನ ರೋಷವನ್ನು ಮಧುಪಾನಕ್ಕೆ ಬೆರಸಿ, ಅದರಿಂದ ನಿನ್ನ ನೆರೆಯವರನ್ನು ಮತ್ತರಾಗಿಸಿ, ಅವರ ಬೆತ್ತಲೆತನವನ್ನು ನೋಡಬೇಕೆಂದಿರುವ ನಿನಗೆ ಧಿಕ್ಕಾರ!</verse>
				<verse number="16">ನೀನು ಸನ್ಮಾನದಿಂದಲ್ಲ, ಅವಮಾನದಿಂದ ತುಂಬಿರುವೆ; ನೀನೂ ಕುಡಿ; ಕುಡಿದು ನಗ್ನನಾಗು. ಸರ್ವೇಶ್ವರಸ್ವಾಮಿಯ ಬಲಗೈಯಲ್ಲಿರುವ ಕೋಪದ ಕೊಡ ನಿನ್ನ ಪಾಲಿಗೂ ಬರುವುದು. ಅವಮಾನವೇ ನಿನ್ನ ಸನ್ಮಾನವನ್ನು ಆವರಿಸಿಬಿಡುವುದು.</verse>
				<verse number="17">ನೀನು ಜನರ ರಕ್ತವನ್ನು ಸುರಿಸಿರುವೆ. ನಾಡುಗಳನ್ನೂ ನಗರಗಳನ್ನೂ ಅವುಗಳ ನಿವಾಸಿಗಳನ್ನೂ ಹಿಂಸಿಸಿರುವೆ. ಲೆಬನೋನ್ ಅರಣ್ಯಗಳನ್ನೂ ಕಡಿದುಹಾಕಿರುವೆ. ಈಗ ನಿನ್ನನ್ನೇ ಕಡಿದುಹಾಕಲಾಗುವುದು. ಅದರ ಪ್ರಾಣಿಪಕ್ಷಿಗಳನ್ನು ನಾಶಮಾಡಿರುವೆ. ಈಗ ಅವು ನಿನಗೆ ಭಯಾನಕವಾಗಿರುವುವು.</verse>
				<verse number="18">ಕೆತ್ತನೆಯ ವಿಗ್ರಹದಿಂದ ಪ್ರಯೋಜನ ಏನು? ಅದು ಕೇವಲ ಮಾನವನ ಕೃತಿ, ಸುಳ್ಳು ಕಣಿಗಾಗಿ ಇಟ್ಟುಕೊಂಡ ಎರಕದ ಗೊಂಬೆ. ಅದನ್ನು ನಿರ್ಮಿಸಿದಾತನಿಗೆ ಅದು ಯಾವ ಅಭಯವನ್ನು ತಾನೇ ತಂದೀತು? ಅದು ಬಾಯ್ದೆರೆಯಲಾಗದ ಮೂಕ ಬೊಂಬೆಯಷ್ಟೆ.</verse>
				<verse number="19">ಮರದ ತುಂಡಿಗೆ, ‘ಎಚ್ಚೆತ್ತುಕೊ’; ಜಡಕಲ್ಲಿಗೆ, ‘ಎದ್ದೇಳು’ ಎಂದು ಆಜ್ಞಾಪಿಸುವವನು ನಿಜಕ್ಕೂ ಬುದ್ಧಿಹೀನನು. ಬೊಂಬೆಯು ಬೋಧಿಸಬಲ್ಲದೇ? ಬೆಳ್ಳಿಬಂಗಾರವನ್ನು ಅದಕ್ಕೆ ಹೊದಿಸಿರುವುದೇನೋ ನಿಜ. ಆದರೆ ಅದಕ್ಕೆ ಉಸಿರೋ ಇಲ್ಲವೇ ಇಲ್ಲ.</verse>
				<verse number="20">ಸರ್ವೇಶ್ವರ ಪ್ರಸನ್ನನಾಗಿಹನು ಪವಿತ್ರಾಲಯದಲ್ಲಿ; ಜಗವೆಲ್ಲ ಮೌನತಾಳಲಿ ಆತನ ಸನ್ನಿಧಿಯಲ್ಲಿ.</verse>
			</chapter>
			<chapter number="3">
				<verse number="1">ಸರ್ವೇಶ್ವರಾ, ಕೇಳಿರುವೆ ನಿನ್ನ ಕೀರ್ತಿಯನು ಬೆರಗಾದೆ ಕೇಳಿ ನಿನ್ನ ಮಹತ್ಕಾರ್ಯವನು.</verse>
				<verse number="2">ಮರಳಿ ಮಾಡು ನಮ್ಮೀಕಾಲದಲಿ ಅವುಗಳನು ಪ್ರಚುರಪಡಿಸು ಪ್ರಸ್ತುತಕಾಲದಲಿ ಅವುಗಳನು ರೋಷಗೊಂಡರೂ ಮರೆಯದಿರು ಕರುಣೆಯನು</verse>
				<verse number="3">ಬರುತಿಹನು ದೇವನು ಎದೋಮಿನಿಂದ ಆ ಪರಮಪಾವನಸ್ವಾಮಿ ಪಾರಾನ್ ಪರ್ವತದಿಂದ. ಆವರಿಸುವುದು ಆತನ ಪ್ರಭಾವ ಆಕಾಶಮಂಡಲವನು ತುಂಬಿಹುದು ಆತನ ಮಹಿಮೆ ಭೂಮಂಡಲವನು.</verse>
				<verse number="4">ರವಿಯಂತಿದೆ ಆತನ ತೇಜಸ್ಸಿನ ಮೆರೆತ ಕಿರಣಗಳು ಹೊರಹೊಮ್ಮುತಿವೆ ಆತನ ಕರಗಳಿಂದ ಮರೆಯಾಗಿದೆ ಅಲ್ಲೇ ಆತನ ಶಕ್ತಿಸಾಮರ್ಥ್ಯ.</verse>
				<verse number="5">ಸಾಗುತಿದೆ ವ್ಯಾಧಿ ಆತನ ಮುಂದೆ ಬರುತಿದೆ ಮೃತ್ಯು ಆತನ ಹಿಂದೆ.</verse>
				<verse number="6">ಕಂಪಿಸುತ್ತದೆ ಭೂಮಿ ಆತ ನಿಂತಾಗ ಅದರುತ್ತದೆ ಲೋಕ ಆತ ದಿಟ್ಟಿಸಿದಾಗ ಸೀಳಿಹೋಗುತ್ತವೆ ಪುರಾತನಪರ್ವತಗಳು ಕುಸಿದುಬೀಳುತ್ತವೆ ಸನಾತನ ಗಿರಿಗಳು ಅನಾದಿಯಿಂದ ಹಾಗೆಯೆ ಆತನ ಆಗಮನಗಳು.</verse>
				<verse number="7">ಇಗೋ, ತಳಮಳಗೊಂಡಿವೆ ಕೂಷಾನಿನ ಗುಡಾರಗಳು ನಡುಗುತ್ತಿವೆ ಮಿದ್ಯಾನ್ ನಾಡಿನ ಡೇರೆಗಳು.</verse>
				<verse number="8">ಮೋಡಗಳ ಮೇಲೆ ನೀ ಆಗಮಿಸಿದೆ ಏಕೆ? ಜಯರಥಗಳಲ್ಲಿ ಆಸೀನನಾಗಿ ಬಂದೆ ಏಕೆ? ಸರ್ವೇಶ, ನಿನಗೆ ರೌದ್ರವೇ ನದಿಗಳ ಮೇಲೆ? ಸಿಟ್ಟುಸಿಡುಕವೇ ಹೊಳೆಗಳ ಮೇಲೆ? ರೋಷಾವೇಷವೇ ಸಮುದ್ರದ ಮೇಲೆ?</verse>
				<verse number="9">ತೆಗೆದಿಟ್ಟೆ ಬಿಲ್ಲನು ತೋಳಿನಿಂದ ಹೊರಡಿಸಿದೆ ಬಾಣಗಳನು ಅದರಿಂದ ಸೀಳಿರುವೆ ಭೂಮಿಯನು ನದಿಗಳಿಂದ.</verse>
				<verse number="10">ನಿನ್ನ ನೋಡಿ ತಳಮಳಗೊಳ್ಳುತ್ತವೆ ಬೆಟ್ಟಗಳು ಹರಿಯುತ್ತವೆ ಆಗಸದಿಂದ ಪ್ರವಾಹಗಳು ಕೈಯೆತ್ತಿ ಭೋರ್ಗರೆಯುತ್ತವೆ ಸಾಗರಗಳು.</verse>
				<verse number="11">ಹಾರಿ ಓಡುವ ನಿನ್ನ ಬಾಣಗಳ ಬೆಳಕಿಗೆ ಥಳಥಳಿಸುವ ನಿನ್ನ ಈಟಿಯ ಹೊಳಪಿಗೆ ಸೂರ್ಯಚಂದ್ರ ಅಡಗುತ್ತವೆ ಗೂಡಿನೊಳಗೆ.</verse>
				<verse number="12">ಧರೆಯನು ನೀ ಹಾದುಹೋಗುವೆ ರೌದ್ರದಿಂದ ರಾಷ್ಟ್ರಗಳನು ತುಳಿದುಹಾಕುವೆ ರೋಷದಿಂದ.</verse>
				<verse number="13">ಹೊರಟಿರುವೆ ನಿನ್ನ ಪ್ರಜೆಗಳ ರಕ್ಷಣೆಗೆ ನಿನ್ನ ಅಭಿಷಿಕ್ತನ ಜೀವೋದ್ಧಾರಕೆ. ಬಡಿದುಹಾಕಿರುವೆ ದುರುಳನ ಬುರುಡೆಯನು ನೆಲಸಮಮಾಡಿರುವೆ ಅವನ ಮನೆಯನು.</verse>
				<verse number="14">ದೀನರನು ಗುಟ್ಟಾಗಿ ದಮನಮಾಡಿ ಹಿಗ್ಗುವವರಂತೆ ನನ್ನ ಚದರಿಸಲು ಬಂದರು ಅವನ ಭಟರು ಬಿರುಗಾಳಿಯಂತೆ ಅವನ ಆಯುಧಗಳಿಂದಲೆ ಅವರ ತಲೆಯನು ನೀ ಬಡಿದೆ.</verse>
				<verse number="15">ಅಶ್ವಗಳನ್ನೇರಿ ನೀ ಸಮುದ್ರವನು ದಾಟಿದೆ ನೊರೆಗರೆಯುವ ಜಲರಾಶಿಯನು ಹಾದುಹೋದೆ.</verse>
				<verse number="16">ಇದಕೇಳಿ ನಡುನಡುಗಿತು ನನ್ನ ಒಡಲು ಅದುರಿದವು ಆ ಶಬ್ದಕ್ಕೆ ನನ್ನ ತುಟಿಗಳು ಕೊಳೆತಂತಾದವು ನನ್ನೆಲುಬುಗಳು ನಿಂತಲ್ಲೇ ತತ್ತರಿಸಿದವು ನನ್ನ ಕಾಲುಗಳು ಆಪತ್ತು ಬಂದೊದಗುವುದು ನಮ್ಮನ್ನು ಆಕ್ರಮಿಸುವವರಿಗೆ ಕಾದಿರುವೆ ನಾನು ಸಹನಶೀಲನಾಗಿ ಅಂದಿನವರೆಗೆ.</verse>
				<verse number="17">ಅಂಜೂರದ ಮರ ಚಿಗುರದೆಹೋದರೂ ದ್ರಾಕ್ಷಾಲತೆಗಳಲ್ಲಿ ಹಣ್ಣು ಕಾಣದೆಹೋದರೂ ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ ಹೊಲಗದ್ದೆಗಳು ಆಹಾರ ಕೊಡದೆಹೋದರೂ ಕುರಿಹಟ್ಟಿಗಳು ಬರಿದಾಗಿಹೋದರೂ ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,</verse>
				<verse number="18">ಸಂತೋಷಿಸುವೆ ನಾನು ಸರ್ವೇಶ್ವರನಲಿ ಆನಂದಿಸುವೆ ನನ್ನ ಉದ್ಧಾರಕ ದೇವನಲಿ.</verse>
				<verse number="19">ಸ್ವಾಮಿ ಸರ್ವೇಶ್ವರ ನೀಡುವನೆನಗೆ ಧೀರತೆ ಚುರುಕುಗೊಳಿಸುವನಾತ ನನ್ನ ಕಾಲುಗಳನು ಜಿಂಕೆಯಂತೆ ಮಾಡುವನು ಬೆಟ್ಟಗುಡ್ಡಗಳಲಿ ನಾನು ಓಡಾಡುವಂತೆ.</verse>
			</chapter>
		</book>
		<book number="36">
			<chapter number="1">
				<verse number="1">ಅಮೋನನ ಮಗನು ಹಾಗೂ ಜುದೇಯದ ಅರಸನು ಆದ ಯೋಷೀಯನ ಕಾಲದಲ್ಲಿ ಸರ್ವೇಶ್ವರ ಜೆಫನ್ಯನಿಗೆ ಕೊಟ್ಟ ಸಂದೇಶವಿದು: (ಜೆಫನ್ಯನು ಕೂಷಿಯ ಮಗನು; ಕೂಷಿಯನು ಗೆದಲ್ಯನಿಗೆ, ಗೆದಲ್ಯನು ಅಮರ್ಯನಿಗೆ, ಅಮರ್ಯನು ಹಿಜ್ಕೀಯನಿಗೆ ಹುಟ್ಟಿದವರು).</verse>
				<verse number="2">ಸರ್ವೇಶ್ವರ ಇಂತೆಂದರು - “ನಾನು ಭೂಮಂಡಲದ ಮೇಲೆ ಏನೂ ಇಲ್ಲದಂತೆ ಸಮಸ್ತವನ್ನು ಅಳಿಸಿಬಿಡುವೆನು.</verse>
				<verse number="3">ಮನುಷ್ಯರು, ಮೃಗಗಳು, ಆಕಾಶದ ಪಕ್ಷಿಗಳು, ಸಮುದ್ರದ ಮೀನುಗಳು - ಇವೆಲ್ಲವನ್ನು ನಾಶಪಡಿಸುವೆನು. ದುರ್ಜನರು ಬಿದ್ದು ಸಾಯುವಂತೆ ಮಾಡುವೆನು; ನರಸಂತಾನವನ್ನು ಧರೆಯ ಮೇಲಿಂದ ಕಿತ್ತುಹಾಕುವೆನು.” ಇದು ಸರ್ವೇಶ್ವರಸ್ವಾಮಿಯ ನುಡಿ.</verse>
				<verse number="4">“ಜುದೇಯ ನಾಡನ್ನೂ ಜೆರುಸಲೇಮಿನ ನಿವಾಸಿಗಳೆಲ್ಲರನ್ನೂ ಕೈಯೆತ್ತಿ ಸದೆಬಡಿಯುವೆನು; ಬಾಳನ ಪೂಜೆಪುರಸ್ಕಾರಗಳ ಗುರುತೂ ಅಲ್ಲಿ ಇಲ್ಲದಂತೆ ಮಾಡುವೆನು. ಅವನ ಪೂಜಾರಿಗಳನ್ನು ನಿರ್ನಾಮಗೊಳಿಸುವೆನು;</verse>
				<verse number="5">ಮಾಳಿಗೆಗಳ ಮೇಲೆ ನಿಂತು ಆಕಾಶದ ಸೂರ್ಯ, ಚಂದ್ರ, ನಕ್ಷತ್ರಗಳನ್ನು ಆರಾಧಿಸುವವರನ್ನು ನಾಶಗೊಳಿಸುವೆನು; ಅಂತೆಯೇ ಸರ್ವೇಶ್ವರನ ಆರಾಧಕರೆಂದು ಪ್ರಮಾಣಮಾಡಿ, ಮಲ್ಕಾಮನ ಮೇಲೂ ಪ್ರಮಾಣ ಮಾಡುವವರನ್ನು ವಿನಾಶಗೊಳಿಸುವೆನು.</verse>
				<verse number="6">ನನಗೆ ಬೆನ್ನು ತೋರಿಸಿ, ನನ್ನ ದರ್ಶನವನ್ನು ಬಯಸದೆ, ನನ್ನ ಮಾರ್ಗಬಿಟ್ಟವರನ್ನು ಧ್ವಂಸಮಾಡುವೆನು.”</verse>
				<verse number="7">“ಸ್ವಾಮಿ ಸರ್ವೇಶ್ವರ ನ್ಯಾಯತೀರ್ಪು ನೀಡುವ ದಿನ ಸಮೀಪಿಸಿದೆ; ಆದುದರಿಂದ ಅವರ ಸನ್ನಿಧಿಯಲ್ಲಿ ಮೌನ ತಾಳಿರಿ. ಸರ್ವೇಶ್ವರ, ಯಜ್ಞದ ಔತಣವನ್ನು ಸಿದ್ಧಗೊಳಿಸಿದ್ದಾರೆ. ಅತಿಥಿಗಳನ್ನು ಪವಿತ್ರೀಕರಿಸಿದ್ದಾರೆ.</verse>
				<verse number="8">ಸ್ವಾಮಿಯ ಆ ಯಜ್ಞದ ದಿನದಂದು ನಾನು ದೇಶಾಧಿಪತಿಗಳನ್ನು, ರಾಜವಂಶದವರನ್ನು, ಹಾಗೂ ಅನ್ಯಮತೀಯ ವಸ್ತ್ರಧಾರಿಗಳನ್ನು ದಂಡಿಸುವೆನು.</verse>
				<verse number="9">ಹೊಸ್ತಿಲನ್ನು ದಾಟಿ ಮೋಸ, ವಂಚನೆ, ಹಿಂಸಾಚಾರಗಳಿಂದ ದೋಚಿದವುಗಳನ್ನು ತಂದು ತಮ್ಮ ದೇವರ ಮಂದಿರವನ್ನು ತುಂಬಿಸುವ ಎಲ್ಲರನ್ನೂ ಆ ದಿನದಂದು ನಾನು ದಂಡಿಸುವೆನು.</verse>
				<verse number="10">“ಆ ದಿನದಲ್ಲಿ ಜೆರುಸಲೇಮಿನಲ್ಲಿರುವ ಮೀನುಬಾಗಿಲಿನ ಬಳಿ ಕೂಗಾಟವನ್ನು, ಪಟ್ಟಣದ ಹೊಸ ಬಡಾವಣೆಯಲ್ಲಿ ಗೋಳಾಟವನ್ನು, ಹಾಗೂ ಬೆಟ್ಟಗುಡ್ಡಗಳಲ್ಲಿ ಭೀಕರ ಗದ್ದಲವನ್ನು ಕೇಳುವಿರಿ. ಇದು ಸರ್ವೇಶ್ವರಸ್ವಾಮಿಯ ನುಡಿ.</verse>
				<verse number="11">ಆಗ ಪಟ್ಟಣದ ಸಂತೆಬೀದಿಗಳಲ್ಲಿ ವಾಸಮಾಡುವವರು ಅತ್ತು ಪ್ರಲಾಪಿಸಲಿ; ವ್ಯಾಪಾರಸ್ಥರೆಲ್ಲರೂ ಸತ್ತುಹೋಗಿರುವರು; ಅಕ್ಕಸಾಲಿಗರೆಲ್ಲರೂ ಕಣ್ಮರೆಯಾಗಿರುವರು.</verse>
				<verse number="12">“ಆಗ ದೀಪವನ್ನು ಹಿಡಿದುಕೊಂಡು ಜೆರುಸಲೇಮನ್ನೆಲ್ಲಾ ಹುಡುಕಿಬಿಡುವೆನು. ‘ಸರ್ವೇಶ್ವರ ಮೇಲನ್ನಾಗಲಿ, ಕೇಡನ್ನಾಗಲಿ ಏನನ್ನೂ ಮಾಡುವುದಿಲ್ಲ’ ಎಂದುಕೊಳ್ಳುವ ಮದ್ಯದ ಮಡ್ಡಿಯಂಥ ಜಡ ಮನಸ್ಕರನ್ನು ದಂಡಿಸುವೆನು.</verse>
				<verse number="13">ಅವರ ಆಸ್ತಿಪಾಸ್ತಿಯೆಲ್ಲಾ ಸೂರೆಯಾಗುವುದು, ಅವರ ಮನೆಮಠಗಳು ಹಾಳಾಗುವುವು; ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಮಾಡರು; ದ್ರಾಕ್ಷಾತೋಟಗಳನ್ನು ಬೆಳೆಸಿಕೊಂಡರೂ ಅವುಗಳಿಂದ ದ್ರಾಕ್ಷಾರಸವನ್ನು ಕುಡಿಯರು.”</verse>
				<verse number="14">ಸರ್ವೇಶ್ವರಸ್ವಾಮಿಯ ಮಹಾದಿನ ಹತ್ತಿರವಾಯಿತು; ಸಮೀಪಿಸಿತು. ಅದು ಬಹು ತ್ವರೆಯಾಗಿ ಬರುತ್ತಿದೆ; ಅದು ಕಠೋರವಾದ ದಿನ, ಆ ದಿನದ ಸುದ್ದಿ ಕಹಿಯಾದುದು, ಎಂಥಾ ಶೂರರನ್ನೂ ಕೂಡ ಘೋರವಾಗಿ ಗೋಳಾಡಿಸುವಂಥದ್ದು.</verse>
				<verse number="15">ಅದು ರೌದ್ರದ ದಿನ, ಕಷ್ಟ - ಸಂಕಟದ ದಿನ, ನಾಶವಿನಾಶದ ದಿನ, ಕತ್ತಲು ಕಾರ್ಗತ್ತಲ ದಿನ, ಕಾರ್ಮುಗಿಲು ಕವಿದ ಕರಾಳ ದಿನ;</verse>
				<verse number="16">ಕೋಟೆಕೊತ್ತಲಗಳನ್ನು, ಘನಗೋಪುರಗಳನ್ನು ಆಕ್ರಮಿಸಲು ಯುದ್ಧಕಹಳೆಯು ಮೊಳಗುವ ದಿನ, ಯುದ್ಧಘೋಷಣೆಗಳನ್ನು ಆರ್ಭಟಿಸುವ ದಿನ.</verse>
				<verse number="17">ಸರ್ವೇಶ್ವರ ಇಂತೆನ್ನುತ್ತಾರೆ, “ಮಾನವರ ಮೇಲೆ ಕಷ್ಟ - ಸಂಕಷ್ಟಗಳನ್ನು ಬರಮಾಡುವೆನು; ಅವರು ಕುರುಡರಂತೆ ತಡಕಾಡುವರು. ಏಕೆಂದರೆ ಅವರು ನನಗೆ ವಿರೋಧವಾಗಿ ಪಾಪಮಾಡಿದ್ದಾರೆ; ಅವರ ರಕ್ತವನ್ನು ನೀರಿನಂತೆ ಚೆಲ್ಲಲಾಗುವುದು; ಅವರ ಹೆಣಗಳನ್ನು ಕಸದಂತೆ ಕೊಳೆಯಲು ಬಿಡಲಾಗುವುದು.”</verse>
				<verse number="18">ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.</verse>
			</chapter>
			<chapter number="2">
				<verse number="1">ನಾಚಿಕೆ ಇಲ್ಲದ ಜನಾಂಗದವರೇ, ತೀರ್ಪು ಫಲಿಸುವುದರೊಳಗೆ,</verse>
				<verse number="2">ಕಾಲವು ಹೊಟ್ಟಿನಂತೆ ಹಾರಿಹೋಗುವ ಮೊದಲು, ಸರ್ವೇಶ್ವರಸ್ವಾಮಿಯ ಉಗ್ರಕೋಪವು ನಿಮ್ಮ ಮೇಲೆ ಎರಗುವ ಮುಂಚೆ, ಅವರ ಸಿಟ್ಟಿನ ದಿನ ನಿಮ್ಮನ್ನು ಮುಟ್ಟುವುದಕ್ಕೆ ಮುನ್ನ ಸೇರ ಬನ್ನಿ, ಕೂಡಿ ಬನ್ನಿ.</verse>
				<verse number="3">ನಾಡಿನ ದೀನ ಜನರೇ, ಸರ್ವೇಶ್ವರನ ಆಜ್ಞೆಯನ್ನು ಕೈಗೊಂಡು ನಡೆಯುವವರೇ, ನೀವೆಲ್ಲರೂ ಸ್ವಾಮಿಯ ಕಡೆಗೆ ತಿರುಗಿಕೊಳ್ಳಿ. ಒಳ್ಳೆಯದನ್ನು ಮಾಡಿರಿ, ಸ್ವಾಮಿಯ ಮುಂದೆ ನಿಮ್ಮನ್ನೇ ತಗ್ಗಿಸಿಕೊಳ್ಳಿ; ಸರ್ವೇಶ್ವರಸ್ವಾಮಿಯ ಆ ಸಿಟ್ಟಿನ ದಿನದಂದು ಬಹುಶಃ ನೀವು ಸುರಕ್ಷಿತರಾಗುವಿರಿ.</verse>
				<verse number="4">ಗಾಜಾಪಟ್ಟಣ ನಿರ್ಜನವಾಗುವುದು, ಅಷ್ಕೆಲೋನ್ ಹಾಳಾಗುವುದು; ಅಷ್ಡೋದಿನ ನಿವಾಸಿಗಳನ್ನು ನಡುಮಧ್ಯಾಹ್ನದಲ್ಲೆ ಅಟ್ಟಿಸಿಬಿಡಲಾಗುವುದು; ಎಕ್ರೋನಿನ ಜನರನ್ನು ನಿರ್ಮೂಲಮಾಡಲಾಗುವುದು.</verse>
				<verse number="5">ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನರೇ, ನಿಮಗೆ ಧಿಕ್ಕಾರ! ಫಿಲಿಷ್ಟಿಯರ ನಾಡಾದ ಕಾನಾನೇ, ನಿನಗೆ ಧಿಕ್ಕಾರ! ಸರ್ವೇಶ್ವರನ ನ್ಯಾಯತೀರ್ಪು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ಯಾರೂ ಉಳಿಯದಂತೆ ಅಳಿಸಿಬಿಡುವರು.</verse>
				<verse number="6">ಸಮುದ್ರತೀರದಲ್ಲಿರುವ ಆ ಪ್ರಾಂತ್ಯವು ಹುಲ್ಲುಗಾವಲಾಗುವುದು; ಕುರುಬರ ಗುಡಿಸಲಾಗುವುದು, ಕುರಿಗಳ ದೊಡ್ಡಿಯಾಗುವುದು.</verse>
				<verse number="7">ಆ ಕರಾವಳಿಯು ಅಳಿದುಳಿದ ಯೆಹೂದ್ಯರ ಪಾಲಾಗುವುದು; ಅವರ ದನಕುರಿಗಳಿಗೆ ಹುಲ್ಲುಗಾವಲಾಗುವುದು; ಅಷ್ಕೆಲೋನಿನ ಮನೆಗಳು ಅವರಿಗೆ ವಿಶ್ರಾಂತಿ ನಿಲಯಗಳಾಗುವುವು. ದೇವರಾದ ಸರ್ವೇಶ್ವರ ಅವರನ್ನು ಪರಿಪಾಲಿಸುವರು ಮತ್ತು ಅವರನ್ನು ಮರಳಿ ಏಳಿಗೆಗೆ ತರುವರು.</verse>
				<verse number="8">“ಮೋವಾಬ್ಯರು ಮತ್ತು ಅಮ್ಮೋನ್ಯರು ಅಹಂಕಾರದಿಂದ ನನ್ನ ಜನರ ವಿರುದ್ಧ ಆಡುವ ಚುಚ್ಚುಮಾತುಗಳು ನನ್ನ ಕಿವಿಗೆ ಬಿದ್ದಿವೆ. ನನ್ನ ಜನರ ನಾಡನ್ನು ಸ್ವಾಧೀನಪಡಿಸಿಕೊಳ್ಳುವುದಾಗಿ ಅವರು ಕೊಚ್ಚಿಕೊಳ್ಳುತ್ತಿದ್ದಾರೆ.</verse>
				<verse number="9">ಇಸ್ರಯೇಲಿನ ಜೀವಂತ ದೇವರೂ ಸೇನಾಧೀಶ್ವರ ಸರ್ವೇಶ್ವರನೂ ಆದ ನಾನು ನಿಶ್ಚಯವಾಗಿ ಹೇಳುತ್ತೇನೆ - ಸೊದೋಮಿನ ಗತಿಯೇ ಮೋವಾಬಿನ ಗತಿ ಆಗುವುದು. ಗೊಮೋರಾದ ದುರ್ಗತಿಯೇ ಅಮ್ಮೋನ್ಯರಿಗೆ ಸಂಭವಿಸುವುದು. ಈ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವುವು. ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು; ಅಳಿದುಳಿದ ನನ್ನ ಜನರಿಗೆ ಅವು ಸೊತ್ತಾಗುವುವು.”</verse>
				<verse number="10">ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಜನರನ್ನು ದೂಷಿಸಿ ದರ್ಪದ ಮಾತುಗಳನ್ನು ಆಡಿದ್ದರಿಂದಲೆ ಈ ಪ್ರಾಂತ್ಯಗಳ ಗರ್ವಿಷ್ಠ ಜನರಿಗೆ ಶಿಕ್ಷೆಯಾಗುವುದು.</verse>
				<verse number="11">ಸರ್ವೇಶ್ವರ ಅವರಿಗೆ ಭಯಭೀತಿ ಉಂಟುಮಾಡುವರು; ಅವರ ಭೂಮಿಯಲ್ಲಿನ ದೇವತೆಗಳನ್ನೆಲ್ಲಾ ಕ್ಷಯಿಸಿಬಿಡುವರು; ಅದಾದ ನಂತರ ಪ್ರತಿಯೊಂದು ರಾಷ್ಟ್ರದವರು ತಮ್ಮ ತಮ್ಮ ನಾಡಿನಲ್ಲೇ ಸರ್ವೇಶ್ವರಸ್ವಾಮಿಯನ್ನು ಆರಾಧಿಸುವರು.</verse>
				<verse number="12">ಸುಡಾನಿನ ಜನರೇ, ನೀವೂ ಸಹ ಕತ್ತಿಗೆ ತುತ್ತಾಗುವಿರಿ.</verse>
				<verse number="13">ಅಸ್ಸೀರಿಯವನ್ನು ಸರ್ವೇಶ್ವರ ತಮ್ಮ ಭುಜಬಲದಿಂದ ಧ್ವಂಸಮಾಡುವರು; ನಿನೆವೆ ಪಟ್ಟಣವನ್ನು ಹಾಳುಬಿದ್ದ ಅವಶೇಷವಾಗಿ, ನೀರಿಲ್ಲದ ಮರುಭೂಮಿಯಾಗಿ ಮಾಡುವರು.</verse>
				<verse number="14">ಅದು ದನಗಳ ಹಿಂಡುಗಳಿಗೂ ಕುರಿಗಳ ಮಂದೆಗಳಿಗೂ ಎಲ್ಲಾ ತರದ ಪ್ರಾಣಿಗಳಿಗೂ ಮಲಗುವ ಹಟ್ಟಿ ಆಗುವುದು; ಅದರ ಹಾಳುಬಿದ್ದ ಮನೆಗಂಬಗಳ ಮೇಲೆ ಗೂಬೆಗಳೂ, ಗುಬ್ಬಚ್ಚಿಗಳೂ ತಂಗುವುವು. ಗೂಬೆಯ ಘೂಂಕಾರವು ಕಿಟಕಿಯಿಂದ ಕೇಳಿಬರುವುದು; ಕಾಗೆಗಳ ಕೂಗು ಬಾಗಿಲಿನ ಹೊಸ್ತಿಲಲ್ಲೇ ಕೇಳುವುದು; ದೇವದಾರು ಮರದ ತೊಲೆಗಳು ಕಳಚಿಬೀಳುವುವು.</verse>
				<verse number="15">“ಇರುವ ನಗರ ನಾನೇ, ನನ್ನ ಹೊರತು ಇನ್ನಾರೂ ಇಲ್ಲ” ಎಂದು ಕೊಚ್ಚಿಕೊಂಡು ಯಾವ ಚಿಂತೆಯೂ ಇಲ್ಲದೆ, ನೆಮ್ಮದಿಯಿಂದ ಇದ್ದ ನಿನೆವೆಯ ಗತಿ ನೋಡಿ, ಎಂಥ ಹಾಳುಬಿದ್ದ ಊರಾಗಿದೆ! ಕಾಡುಮೃಗಗಳ ಬೀಡಾಗಿದೆ! ಹಾದುಹೋಗುವವರೆಲ್ಲ ಸಿಳ್ಳುಹಾಕಿ ಕೈತೋರಿಸಿ ಪರಿಹಾಸ್ಯಮಾಡುವಷ್ಟು ಕೀಳಾಗಿದೆ!</verse>
			</chapter>
			<chapter number="3">
				<verse number="1">ದಬ್ಬಾಳಿಕೆ ನಡೆಸುವ, ದಂಗೆಯೇಳುವ ದುಷ್ಟ ನಗರಕ್ಕೆ ಧಿಕ್ಕಾರ!</verse>
				<verse number="2">ಅದು ಯಾರ ಬುದ್ಧಿಮಾತಿಗೂ ಕಿವಿಗೊಡಲಿಲ್ಲ. ಶಿಕ್ಷಣಕ್ಕೆ ಒಳಪಡಲಿಲ್ಲ. ಸರ್ವೇಶ್ವರಸ್ವಾಮಿಯಲ್ಲಿ ಭರವಸೆ ಇಡಲಿಲ್ಲ, ತನ್ನ ದೇವರ ಸನ್ನಿಧಿಗೆ ಬರಲಿಲ್ಲ.</verse>
				<verse number="3">ಅದರ ಪ್ರಮುಖರು ಗರ್ಜಿಸುವ ಸಿಂಹಗಳು. ಅದರ ನ್ಯಾಯಾಧಿಪತಿಗಳು ಹಸಿದ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.</verse>
				<verse number="4">ಅದರ ಪ್ರವಾದಿಗಳು ಬಡಾಯಿಕೊಚ್ಚುವವರು, ವಿಶ್ವಾಸದ್ರೋಹಿಗಳು. ಅದರ ಯಾಜಕರು ಪವಿತ್ರವಾದುದನ್ನು ಹೊಲೆಗೆಡಿಸುವಂಥವರು, ಧರ್ಮವಿಧಿಗಳನ್ನು ಭಂಗಪಡಿಸುವಂಥವರು.</verse>
				<verse number="5">ಆದರೆ ಅದರ ಮಧ್ಯೆಯಿರುವ ಸರ್ವೇಶ್ವರ ನ್ಯಾಯಸ್ವರೂಪಿ, ಎಂದಿಗೂ ಅನ್ಯಾಯ ಮಾಡುವುದಿಲ್ಲ. ದಿನದಿನವೂ ತಪ್ಪದೆ ನ್ಯಾಯ ದೊರಕಿಸುತ್ತಾರೆ. ಅವರಿಗೆ ಗುಟ್ಟಾಗಿರುವುದು ಯಾವುದೂ ಇಲ್ಲ. ಅನ್ಯಾಯಮಾಡುವವನಿಗಾದರೋ ನಾಚಿಕೆ ಎಂಬುದೇ ಇಲ್ಲ.</verse>
				<verse number="6">ಸರ್ವೇಶ್ವರ ಇಂತೆನ್ನುತ್ತಾರೆ: “ನಾನು ರಾಷ್ಟ್ರಗಳನ್ನು ಧ್ವಂಸಮಾಡಿದ್ದೇನೆ. ಅವುಗಳ ಕೋಟೆಕೊತ್ತಲಗಳು ಪಾಳುಬಿದ್ದಿವೆ. ಅವುಗಳ ಹಾದಿಬೀದಿಗಳನ್ನು ನಿರ್ಜನವಾಗಿಸಿದ್ದೇನೆ. ಯಾರೂ ಅವುಗಳಲ್ಲಿ ಹಾದುಹೋಗುವಂತಿಲ್ಲ. ಅವರ ಪಟ್ಟಣಗಳು ನಾಶವಾಗಿವೆ; ನಿರ್ನಿವಾಸವಾಗಿ ಶೂನ್ಯವಾಗಿವೆ.</verse>
				<verse number="7">ಇದರಿಂದಲಾದರೂ ಜೆರುಸಲೇಮ್ ನಗರ ನನಗೆ ಭಯಪಡುವುದು, ನಾನು ಕಲಿಸಿದ ಪಾಠವನ್ನು ಎಂದಿಗೂ ಮರೆಯದು’ ಎಂದುಕೊಂಡೆ. ಆದರೆ ಅದರ ನಿವಾಸಿಗಳು ತಮ್ಮ ನಡತೆಯನ್ನು ಕೆಡಿಸಿಕೊಳ್ಳಲು ಮತ್ತಷ್ಟು ಕಾತರರಾದರು.”</verse>
				<verse number="8">ಆದುದರಿಂದ ಸರ್ವೇಶ್ವರ ಇಂತೆನ್ನುತ್ತಾರೆ: “ಸ್ವಲ್ಪತಾಳಿರಿ, ನಾನು ತಪ್ಪನ್ನು ನಿಮಗೆ ತೋರಿಸುವ ದಿನಕ್ಕಾಗಿ ಕಾದಿರಿ. ರಾಷ್ಟ್ರಗಳನ್ನು ಒಂದಾಗಿಸಲು, ರಾಜ್ಯಗಳನ್ನು ಒಂದುಗೂಡಿಸಲು ನಿರ್ಧರಿಸಿದ್ದೇನೆ; ಹೀಗೆ ಅವುಗಳ ಮೇಲೆ ನನ್ನ ರೌದ್ರವನ್ನು, ಹೌದು, ನನ್ನ ಉಗ್ರಕೋಪವನ್ನು ಸುರಿಸಲು ತೀರ್ಮಾನಿಸಿದ್ದೇನೆ. ಲೋಕವೆಲ್ಲವು ನನ್ನ ಕೋಪಾಗ್ನಿಯಿಂದ ಧ್ವಂಸವಾಗುವುದು.</verse>
				<verse number="9">“ಆಗ ಎಲ್ಲರೂ ಒಮ್ಮನಸ್ಸಿನಿಂದ ನನ್ನನ್ನು ಪೂಜಿಸಿ ನನ್ನ ಹೆಸರೆತ್ತಿ ಪ್ರಾರ್ಥಿಸುವಂತೆ ಜನಾಂಗಗಳ ಬಾಯನ್ನು ಪರಿವರ್ತಿಸಿ ಶುದ್ಧೀಕರಿಸುವೆನು.</verse>
				<verse number="10">ಚದರಿಹೋಗಿರುವ ನನ್ನ ಜನರು, ನನ್ನ ಭಕ್ತಾದಿಗಳು, ಸುಡಾನಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದೊಪ್ಪಿಸುವರು.ಚದರಿಹೋಗಿರುವ ನನ್ನ ಜನರು, ನನ್ನ ಭಕ್ತಾದಿಗಳು, ಸುಡಾನಿನ ನದಿಗಳ ಆಚೆಯಿಂದಲೂ ನನಗೆ ಕಾಣಿಕೆಯನ್ನು ತಂದೊಪ್ಪಿಸುವರು.</verse>
				<verse number="11">ನೀನು ನನಗೆ ಎದುರಾಗಿ ದಂಗೆಯೆದ್ದು ಮಾಡಿದ ನಾನಾ ದುಷ್ಕೃತ್ಯಗಳಿಗಾಗಿ ಆ ದಿನದಂದು ನೀನು ನಾಚಿಕೆಪಡುವ ಅವಶ್ಯಕತೆ ಇರುವುದಿಲ್ಲ. ಏಕೆಂದರೆ ಅತಿ ಗರ್ವದಿಂದ ಮೆರೆಯುವವರನ್ನು ನಿನ್ನ ಮಧ್ಯೆಯಿಂದ ತೊಲಗಿಸಿಬಿಡುವೆನು. ಅಂದಿನಿಂದ ನನ್ನ ಪವಿತ್ರ ಪರ್ವತದ ಮೇಲೆ ನೀನು ಗರ್ವಪಡದೆ ಬಾಳುವೆ.</verse>
				<verse number="12">ದೀನರೂ ನಮ್ರರೂ ಆದ ಜನರನ್ನು ನಿನ್ನಲ್ಲಿ ಉಳಿಸುವೆನು. ಅವರು ಪ್ರಭುವಿನ ನಾಮದಲ್ಲಿ ಭಯಭಕ್ತಿಯಿಂದಿರುವರು.</verse>
				<verse number="13">ಇಸ್ರಯೇಲಿನಲ್ಲಿ ಅಳಿದುಳಿದವರು ಅನ್ಯಾಯಮಾಡರು, ಸುಳ್ಳಾಡರು. ಅವರ ಬಾಯಲ್ಲಿ ಮೋಸವಿರದು. ಕುರಿಮಂದೆಯಂತೆ ಮೇದು ಸುರಕ್ಷಿತವಾಗಿರುವರು. ಅವರನ್ನು ಯಾರೂ ಹೆದರಿಸರು.”</verse>
				<verse number="14">ಹರ್ಷಧ್ವನಿಗೈ, ಸಿಯೋನ್ ಕುವರಿಯೇ ಘೋಷಿಸು, ಇಸ್ರಯೇಲ್ ದೇಶವೇ, ಹೃತ್ಪೂರ್ವಕವಾಗಿ ಸಂತೋಷಿಸು, ಜೆರುಸಲೇಮ್ ನಗರವೇ.</verse>
				<verse number="15">ತಪ್ಪಿಸಿಹನು ಸರ್ವೇಶ ನಿನಗೆ ವಿಧಿಸಿರುವ ದಂಡನೆಗಳನು ತಳ್ಳಿ ಹೊರಗಟ್ಟಿಹನು ನಿನ್ನ ಶತ್ರುಗಳನು ಇಸ್ರಯೇಲಿನ ರಾಜನಾದ ಸರ್ವೇಶ ಇಹನು ನಿನ್ನ ಮಧ್ಯೆ ನೀನಿರುವೆ ಇನ್ನೆಂದಿಗೂ ಕೇಡಿಗಂಜದೆ.</verse>
				<verse number="16">ಜೆರುಸಲೇಮಿಗೆ ಈ ಪರಿ ಹೇಳುವರು ಆ ದಿನದೊಳು: “ಅಂಜಬೇಡ ಸಿಯೋನ್, ಸೋತು ಜೋಲುಬೀಳದಿರಲಿ ನಿನ್ನ ಕೈಗಳು.”</verse>
				<verse number="17">ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ.</verse>
				<verse number="18">ತಡೆದುಬಿಡುವನು ಸರ್ವವಿನಾಶವನು ದೂರಮಾಡುವನು ನಿನ್ನಿಂದ ನಿಂದೆ ಅಪಮಾನವನು.</verse>
				<verse number="19">ಆ ದಿನದಲಿ ಇಂತೆನ್ನುವನು: “ದಂಡಿಸುವೆನು ನಿನ್ನನು ಬಾಧಿಸಿದವರನು ಉದ್ಧರಿಸುವೆನು ನಿನ್ನಲ್ಲಿ ಕುಂಟುವವರನು ಒಂದುಗೂಡಿಸುವೆನು ಚದರಿಹೋದವರನು ಬರಮಾಡುವೆನು ಅವಮಾನಿತರಿಗೆ ಸನ್ಮಾನವನು ಗಿಟ್ಟಿಸುವೆನು ನಿಮಗೆ ಜಗದಲ್ಲೆಲ್ಲ ಕೀರ್ತಿಯನು.</verse>
				<verse number="20">ಕರೆದು ತರುವೆನು ನಿಮ್ಮನ್ನು ಆ ಕಾಲದೊಳು ಮರಳಿಸುವೆನು ಮನೆಗೆ ಆ ದಿನದೊಳು. ಹಿಂದಿನ ಸಮೃದ್ಧಿಯನ್ನು ಬರಮಾಡುವೆನು ನಿನ್ನ ಕಣ್ಮುಂದೆ ದೊರಕುವುದಾಗ ನಿನಗೆ ಸ್ತುತಿಕೀರ್ತಿ ಜನಾಂಗಗಳ ಮುಂದೆ.” - ಸರ್ವೇಶ್ವರಸ್ವಾಮಿಯ ನುಡಿಯಿದು.</verse>
			</chapter>
		</book>
		<book number="37">
			<chapter number="1">
				<verse number="1">ಪರ್ಷಿಯಾದ ಚಕ್ರವರ್ತಿಯಾದ ಡೇರಿಯಸ್ ಅವನ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳ ಮೊದಲನೆಯ ದಿನದಂದು ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರಸ್ವಾಮಿ ನೀಡಿದ ದೈವೋಕ್ತಿ: ಅದು ಶೆಯಲ್ತಿಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲನನ್ನು ಮತ್ತು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನನ್ನು ಉದ್ದೇಶಿಸಿ ಕೊಡಲಾದ ಸಂದೇಶವಾಗಿತ್ತು.</verse>
				<verse number="2">ಸೇನಾಧೀಶ್ವರರಾದ ಸರ್ವೇಶ್ವರ ಇಂತೆನ್ನುತ್ತಾರೆ: “ಮಹಾದೇವಾಲಯವನ್ನು ಪುನಃ ಕಟ್ಟುವುದಕ್ಕೆ ಸಮಯ ಇನ್ನೂ ಬಂದಿಲ್ಲ ಎಂದುಕೊಳ್ಳುತ್ತಾರೆ ಈ ಜನರು.”</verse>
				<verse number="3">ಆಗ ಪ್ರವಾದಿ ಹಗ್ಗಾಯನ ಮುಖಾಂತರ ಸರ್ವೇಶ್ವರ ಕೊಟ್ಟ ಸಂದೇಶವೇನೆಂದರೆ:</verse>
				<verse number="4">“ನನ್ನ ಆಲಯ ಹಾಳುಬಿದ್ದಿರುವಾಗ ನೀವು ಸೊಗಸಾದ ಹಲಗೆ ಹೊದಿಸಿದ ಮನೆಗಳಲ್ಲಿ ವಾಸಿಸುವುದು ಸರಿಯೋ?</verse>
				<verse number="5">ನಮಗೆ ಒದಗಿರುವ ಪರಿಸ್ಥಿತಿಯನ್ನು ಆಲೋಚಿಸಿ ನೋಡಿ.</verse>
				<verse number="6">ನೀವು ಬಿತ್ತಿದ ಬೀಜ ಬಹಳ, ಪಡೆದ ಫಲ ವಿರಳ; ತಿನ್ನುತ್ತೀರಿ, ಆದರೆ ತೃಪ್ತಿಯಿಲ್ಲ; ಕುಡಿಯುತ್ತೀರಿ, ಆದರೆ ದಾಹ ನೀಗುವುದಿಲ್ಲ. ಹೊದೆಯುತ್ತೀರಿ, ಆದರೆ ಚಳಿ ಹೋಗುವುದಿಲ್ಲ. ದುಡಿಮೆಗಾರನ ದುಡ್ಡಿನ ಚೀಲ ತೂತಿನ ಚೀಲ.”</verse>
				<verse number="7">ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಿಮಗೆ ಒದಗಿರುವ ಪರಿಸ್ಥಿತಿಯನ್ನು ಕುರಿತು ಆಲೋಚಿಸಿ ನೋಡಿ.</verse>
				<verse number="8">ಮಲೆನಾಡಿಗೆ ಹೋಗಿ ಮರವನ್ನು ತಂದು ನನ್ನ ಆಲಯವನ್ನು ಕಟ್ಟಿರಿ. ಆಗ ನಾನು ಪ್ರಸನ್ನನಾಗುವೆನು. ನನ್ನ ಮಹಿಮೆಯನ್ನು ಪ್ರಕಟಿಸುವೆನು,” ಎಂದು ನುಡಿಯುತ್ತಾರೆ ಸ್ವಾಮಿ.</verse>
				<verse number="9">ನೀವು ನಿರೀಕ್ಷಿಸಿದ್ದು ಸಮೃದ್ಧಿ ಸುಗ್ಗಿ. ಆದರೆ ಸಿಕ್ಕಿದ್ದು ಕಿಂಚಿತ್ತು ಮಾತ್ರ; ಅದನ್ನು ಮನೆಗೆ ತಂದಾಗ ನಾನದನ್ನು ಗಾಳಿಗೆ ತೂರಿಬಿಟ್ಟೆ. ಇದಕ್ಕೆ ಕಾರಣವೇನು?” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ. “ಕಾರಣವೇನೆಂದರೆ ನನ್ನ ಆಲಯ ಪಾಳುಬಿದ್ದಿರುವಾಗ ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸ್ವಂತ ಮನೆಯ ಕೆಲಸದಲ್ಲಿ ಮಗ್ನನಾಗಿದ್ದಾನೆ.</verse>
				<verse number="10">ಈ ಪರಿಣಾಮವಾಗಿ ಆಕಾಶ ಮಳೆಯನ್ನು ಸುರಿಸಿಲ್ಲ, ಭೂಮಿ ಬೆಳೆಯನ್ನು ಫಲಿಸಿಲ್ಲ.</verse>
				<verse number="11">ಭೂಮಿ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ತೈಲಗಿಡಗಳ ತೋಟ, ಹೊಲಗದ್ದೆಗಳ ಉತ್ಪನ್ನ ಇವುಗಳ ಮೇಲೂ ಹಾಗೂ ಜನ, ದನಕರುಗಳು ಮತ್ತು ನಿಮ್ಮ ಕೈಕಸುಬುಗಳ ಮೇಲೂ ಅನಾವೃಷ್ಟಿಯನ್ನು ತಂದಿದ್ದೇನೆ.”</verse>
				<verse number="12">ಆಗ ಶೆಯಲ್ತೀಯೇಲನ ಮಗ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ ಮತ್ತು ಅಳಿದುಳಿದ ಜನರೆಲ್ಲರು ದೇವರಾದ ಸರ್ವೇಶ್ವರಸ್ವಾಮಿಯ ನುಡಿಗೆ ಕಿವಿಗೊಟ್ಟರು. ಆ ಸ್ವಾಮಿಯ ಅಪ್ಪಣೆಯ ಪ್ರಕಾರ ಪ್ರವಾದಿ ಹಗ್ಗಾಯನು ಹೇಳಿದ ಮಾತನ್ನು ಕೇಳಿದರು. ಆ ಸ್ವಾಮಿಯಲ್ಲಿ ಭಯಭಕ್ತಿಯುಳ್ಳವರಾದರು.</verse>
				<verse number="13">ಇದನ್ನು ನೋಡಿ ಸ್ವಾಮಿಯ ದೂತನಾದ ಹಗ್ಗಾಯನು ಜನರಿಗೆ, “ನಾನು ನಿಮ್ಮೊಡನೆ ಇದ್ದೇನೆ ಎಂದು ಸರ್ವೇಶ್ವರ ನುಡಿದಿದ್ದಾರೆ. ಇದು ಸರ್ವೇಶ್ವರಸ್ವಾಮಿಯ ಸಂದೇಶ,” ಎಂದನು.</verse>
				<verse number="14">ಕೂಡಲೆ ಶೆಯಲ್ತೀಯೇಲನ ಮಗನೂ ಜುದೇಯ ನಾಡಿನ ದೇಶಾಧಿಪತಿಯೂ ಆದ ಜೆರುಬ್ಬಾಬೆಲ್, ಯೆಹೋಚಾದಕನ ಮಗನೂ ಮಹಾಯಾಜಕನೂ ಆದ ಯೆಹೋಶುವ, ಮತ್ತು ಅಳಿದುಳಿದ ಜನರೆಲ್ಲರು ಸ್ವಾಮಿಯ ಪ್ರೇರಣೆಯನ್ನು ಪಡೆದರು.</verse>
				<verse number="15">ಡೇರಿಯಸ್ ಚಕ್ರವರ್ತಿಯ ಆಳ್ವಿಕೆಯ ಎರಡನೇ ವರ್ಷದ ಆರನೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಆಲಯದ ನಿರ್ಮಾಣಕ್ಕೆ ಕೈಹಾಕಿದರು.</verse>
			</chapter>
			<chapter number="2">
				<verse number="1">ಅದೇ ವರ್ಷದ ಏಳನೇ ತಿಂಗಳಿನ ಇಪ್ಪತ್ತೊಂದನೆಯ ದಿನದಲ್ಲಿ ಪ್ರವಾದಿ ಹಗ್ಗಾಯನ ಮೂಲಕ ಸರ್ವೇಶ್ವರ ಈ ಸಂದೇಶವನ್ನು ದಯಪಾಲಿಸಿದರು:</verse>
				<verse number="2">ಶೆಯಲ್ತೀಯೇಲನ ಮಗನೂ ಜುದೇಯ ನಾಡಿನ ಅಧಿಪತಿಯೂ ಆದ ಜೆರುಬ್ಬಾಬೆಲನಿಗೆ ಮತ್ತು ಮಹಾಯಾಜಕ ಯೆಹೋಶುವನಿಗೆ ಮತ್ತು ಅಳಿದುಳಿದ ಜನರೆಲ್ಲರಿಗೆ ಹೀಗೆ ತಿಳಿಸು -</verse>
				<verse number="3">“ಈ ದೇವಾಲಯದ ಪೂರ್ವ ವೈಭವವನ್ನು ನೋಡಿದವರು ನಿಮ್ಮಲ್ಲಿ ಎಷ್ಟುಮಂದಿ ಉಳಿದಿದ್ದೀರಿ? ಇದರ ಈಗಿನ ಸ್ಥಿತಿ ನಿಮಗೆ ಹೇಗೆ ತೋರುತ್ತದೆ? ನಿಮ್ಮ ದೃಷ್ಟಿಗೆ ಏನೂ ಇಲ್ಲದಂತೆ ಕಾಣಿಸುತ್ತದಲ್ಲವೇ? ಸರ್ವೇಶ್ವರ ಆದ ನಾನು ಹೇಳುವುದನ್ನು ಕೇಳಿ:</verse>
				<verse number="4">ಜೆರುಬ್ಬಾಬೆಲನೇ, ಈಗ ಧೈರ್ಯದಿಂದಿರು. ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನೇ, ಎದೆಗುಂದಬೇಡ. ನಾಡಿನ ಜನರೇ, ನೀವೆಲ್ಲರು ಧೈರ್ಯದಿಂದ ಕೆಲಸಮಾಡಿ. ಇದು ಸೇನಾಧೀಶ್ವರ ಸರ್ವೇಶ್ವರ ಆದ ನನ್ನ ನುಡಿ. ನಾನು ನಿಮ್ಮೊಡನೆ ಇದ್ದೇನೆ.</verse>
				<verse number="5">ನೀವು ಈಜಿಪ್ಟ್ ದೇಶದಿಂದ ಹೊರಟುಬಂದಾಗ ನಾನು ನಿಮಗೆ ಪ್ರಮಾಣವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು. ನನ್ನ ಆತ್ಮವು ನಿಮ್ಮಲ್ಲಿ ನೆಲೆಗೊಂಡಿದೆ; ಭಯಪಡದಿರಿ.</verse>
				<verse number="6">“ಸ್ವಲ್ಪಕಾಲದಲ್ಲೇ ಮತ್ತೊಮ್ಮೆ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಮರುಭೂಮಿಯನ್ನೂ ಅದರಿಸುವೆನು.</verse>
				<verse number="7">ಸಕಲ ಜನಾಂಗಗಳನ್ನು ನಡುಗಿಸುವೆನು. ಆಗ ಎಲ್ಲ ರಾಷ್ಟ್ರಗಳ ಸಿರಿಸಂಪತ್ತು ಇಲ್ಲಿಗೆ ಬರುವುದು. ಈ ಆಲಯವನ್ನು ವೈಭವದಿಂದ ತುಂಬಿಸುವೆನು. ಇದು ಸರ್ವಶಕ್ತ ಸರ್ವೇಶ್ವರನ ನುಡಿ.</verse>
				<verse number="8">ಬೆಳ್ಳಿ ನನ್ನದು, ಬಂಗಾರವೆಲ್ಲ ನನ್ನದು.</verse>
				<verse number="9">ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ಶ್ರೇಷ್ಠವಾಗಿರುವುದು. ಈ ಸ್ಥಳದಲ್ಲಿ ಶಾಂತಿ ಸಮೃದ್ಧಿಯನ್ನು ಅನುಗ್ರಹಿಸುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.</verse>
				<verse number="10">ಡೇರಿಯಸ್ ಚಕ್ರವರ್ತಿಯ ಆಳ್ವಿಕೆಯ ಎರಡನೇ ವರ್ಷದ ಒಂಬತ್ತನೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಪ್ರವಾದಿ ಹಗ್ಗಾಯನ ಮೂಲಕ ಈ ಸಂದೇಶವನ್ನು ಸರ್ವೇಶ್ವರ ದಯಪಾಲಿಸಿದರು.</verse>
				<verse number="11">ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ - “ನೀನು ಯಾಜಕರ ಬಳಿಗೆ ಹೋಗು.</verse>
				<verse number="12">ಒಬ್ಬನು ತನ್ನ ಬಟ್ಟೆಯ ಸೆರಗಿನಲ್ಲಿ ಪ್ರತಿಷ್ಠಿತ ಮಾಂಸವನ್ನು ಕಟ್ಟಿಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ, ಅನ್ನವನ್ನಾಗಲಿ, ದ್ರಾಕ್ಷಾರಸವನ್ನಾಗಲೀ, ಎಣ್ಣೆಯನ್ನಾಗಲೀ ಅಥವಾ ಯಾವ ಆಹಾರ ಪದಾರ್ಥವನ್ನೇ ಆಗಲಿ ಸೋಕಿದರೆ ಅದು ಪವಿತ್ರವಾಗುತ್ತದೋ? ಎಂದು ಧರ್ಮವಿಧಿಯನ್ನು ವಿಚಾರಿಸು.” ಪ್ರವಾದಿ ಹಾಗೆ ವಿಚಾರಿಸಲು ಯಾಜಕರು ‘ಇಲ್ಲ’ ಎಂದು ಉತ್ತರಕೊಟ್ಟರು.</verse>
				<verse number="13">ಆಗ ಹಗ್ಗಾಯನು, “ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವುದನ್ನಾದರೂ ಸೋಕಿದರೆ ಅದು ಅಶುದ್ಧವಾಗುತ್ತದೋ” ಎಂದು ಕೇಳಿದನು. ಅದಕ್ಕೆ ಯಾಜಕರು: “ಖಂಡಿತವಾಗಿ ಅಶುದ್ಧವಾಗುತ್ತದೆ” ಎಂದು ಉತ್ತರಕೊಟ್ಟರು.</verse>
				<verse number="14">ಆಗ ಹಗ್ಗಾಯನು ಮುಂದುವರಿಸುತ್ತಾ, “ಸರ್ವೇಶ್ವರ ಇಂತೆನ್ನುತ್ತಾರೆ: ಇದರಂತೆಯೇ ಈ ಪ್ರಜೆ, ಈ ಜನಾಂಗ ಕೈಹಾಕುವ ಪ್ರತಿಯೊಂದು ಕೆಲಸ, ಇಲ್ಲಿಗೆ ತರುವ ಕಾಣಿಕೆ, ನೈವೇದ್ಯ, ಎಲ್ಲವೂ ನನಗೆ ಹೊಲೆಯಾಗಿಯೇ ಇದೆ,” ಎಂದನು.</verse>
				<verse number="15">ಸರ್ವೇಶ್ವರ ಇಂತೆನ್ನುತ್ತಾರೆ: “ಸರ್ವೇಶ್ವರನ ಆಲಯ ನಿವೇಶನದಲ್ಲಿ ಕಲ್ಲಿನ ಮೇಲೆ ಕಲ್ಲಿಡುವ ಈ ಮೊದಲ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿ;</verse>
				<verse number="16">ಆ ಕಾಲದಲ್ಲಿ ಒಬ್ಬನು ಇಪ್ಪತ್ತು ಸೇರಿನ ಮೆದೆಗೆ ಬಂದಾಗ ಹತ್ತು ಸೇರು ಧಾನ್ಯ ಮಾತ್ರ ಸಿಕ್ಕುತ್ತಿತ್ತಲ್ಲವೆ? ಐವತ್ತು ಸೇರು ದ್ರಾಕ್ಷಾರಸವನ್ನು ಮೊಗೆಯಬೇಕೆಂದು ತೊಟ್ಟಿಗೆ ಬಂದಾಗ ಇಪ್ಪತ್ತು ಸೇರು ಮಾತ್ರ ದೊರೆಯುತ್ತಿತ್ತಷ್ಟೆ.</verse>
				<verse number="17">ನಾನು ನಿಮ್ಮ ದುಡಿಮೆಯ ಫಲವನ್ನು ಆನೆಕಲ್ಲು, ಬೂಷ್ಟು, ಬಿಸಿಗಾಳಿ - ಇವುಗಳಿಂದ ಹಾಳುಮಾಡಿ ನಿಮ್ಮನ್ನು ಬಾಧಿಸಿದೆನು. ಆದರೂ ನೀವು ನನ್ನ ಕಡೆಗೆ ತಿರುಗಿಕೊಳ್ಳಲಿಲ್ಲ, ಇದನ್ನು ನೆನಪಿನಲ್ಲಿಡಿ. ಇದು ಸರ್ವೇಶ್ವರನ ನುಡಿ.</verse>
				<verse number="18">ಮಹಾದೇವಾಲಯಕ್ಕೆ ಅಸ್ತಿಭಾರಹಾಕಿದ ಅಂದರೆ, ಒಂಬತ್ತನೇ ತಿಂಗಳಿನ ಇಪ್ಪತ್ತನಾಲ್ಕನೇ ಈ ದಿನದ ಹಿಂದಿನ ಕಾಲವನ್ನು ನೆನಪಿಗೆ ತಂದುಕೊಳ್ಳಿ.</verse>
				<verse number="19">ಇನ್ನು ಮುಂದಕ್ಕೂ ಕಣಜದಲ್ಲಿ ಕಾಳಿಲ್ಲದೆ ಇರುವುದೋ? ದ್ರಾಕ್ಷೆ, ಅಂಜೂರ, ದಾಳಿಂಬೆ, ಓಲಿವ್ ಗಿಡಗಳು ಫಲಿಸದೆಹೋಗುವವೋ? ಇಲ್ಲ. ಈ ದಿನ ಮೊದಲ್ಗೊಂಡು ನಾನು ನಿಮ್ಮನ್ನು ಆಶೀರ್ವದಿಸುವೆನು.”</verse>
				<verse number="20">ಅದೇ ಒಂಬತ್ತನೆಯ ತಿಂಗಲಿನ ಇಪ್ಪತ್ತನಾಲ್ಕನೇ ದಿನದಲ್ಲಿ ಸರ್ವೆಶ್ವರ ಹಗ್ಗಾಯನಿಗೆ ಈ ಎರಡನೆಯ ಸಂದೇಶವನ್ನು ದಯಪಾಲಿಸಿದರು:</verse>
				<verse number="21">“ಜುದೇಯ ನಾಡಿನ ಅಧಿಪತಿಯಾದ ಜೆರುಬ್ಬಾಬೆಲನಿಗೆ ಹೀಗೆಂದು ನುಡಿ: ನಾನು ಭೂಮ್ಯಾಕಾಶಗಳನ್ನು ಅದರಿಸುವೆನು.</verse>
				<verse number="22">ರಾಜ್ಯಗಳ ಸಿಂಹಾಸನವನ್ನು ಕೆಡವಿಬಿಡುವೆನು. ರಾಷ್ಟ್ರಗಳ ಸಂಸ್ಥಾನಬಲವನ್ನು ಧ್ವಂಸಮಾಡುವೆನು. ರಥಗಳನ್ನೂ ರಥಾರೂಢರನ್ನೂ ದಬ್ಬಿಬಿಡುವೆನು. ಕುದುರೆಗಳೂ ರಾಹುತರೂ ಬಿದ್ದುಹೋಗುವರು; ಒಬ್ಬನು ಮತ್ತೊಬ್ಬನ ಕತ್ತಿಗೆ ತುತ್ತಾಗುವನು.”</verse>
				<verse number="23">ಸೇನಾಧಿಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಶೆಯಲ್ತೀಯೇಲನ ಮಗನೂ ನನ್ನ ದಾಸನೂ ಆದ ಜೆರುಬ್ಬಾಬೆಲನೇ, ಆ ದಿನಗಳಲ್ಲಿ ನಾನು ನಿನ್ನನ್ನು ಆರಿಸಿ ತೆಗೆದುಕೊಳ್ಳುವೆನು. ನನ್ನ ಮುದ್ರೆ ಉಂಗುರವನ್ನು ತೊಟ್ಟ ರಾಜನನ್ನಾಗಿ ನಿನ್ನನ್ನು ನೇಮಿಸುವೆನು,” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು.</verse>
			</chapter>
		</book>
		<book number="38">
			<chapter number="1">
				<verse number="1">ಡೇರಿಯಸನ ಆಳ್ವಿಕೆಯ ಎರಡನೆಯ ವರ್ಷದ ಎಂಟನೆಯ ತಿಂಗಳಲ್ಲಿ ಸರ್ವೇಶ್ವರನಿಂದ ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಕೇಳಿಬಂದ ದೈವವಾಣಿಯಿದು:</verse>
				<verse number="2">ಸರ್ವೇಶ್ವರ ನಿಮ್ಮ ಪಿತೃಗಳ ಮೇಲೆ ಬಹಳ ಸಿಟ್ಟುಗೊಂಡಿದ್ದಾರೆ.</verse>
				<verse number="3">ಎಂದೇ ನೀನು ನನ್ನ ಜನರಿಗೆ ಹೀಗೆಂದು ಹೇಳು: “ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ಮರಳಿ ನನಗೆ ಅಭಿಮುಖರಾಗಿರಿ. ಆಗ ನಾನು ನಿಮಗೆ ಮರಳಿ ಅಭಿಮುಖನಾಗುವೆನು.</verse>
				<verse number="4">ನಿಮ್ಮ ಪಿತೃಗಳಂತೆ ಆಗಬೇಡಿ. ಅವರಿಗೆ ಪೂರ್ವಕಾಲದ ಪ್ರವಾದಿಗಳು, ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನಿಮ್ಮ ದುರ್ಮಾರ್ಗಗಳನ್ನೂ ದುಷ್ಕೃತ್ಯಗಳನ್ನೂ ಬಿಟ್ಟು ಹಿಂದಿರುಗಿ’ ಎಂದು ಸಾರಿದರು. ಆದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ.</verse>
				<verse number="5">ನಿಮ್ಮ ಪಿತೃಗಳು ಈಗಲೂ ಇದ್ದಾರೆಯೇ? ಪ್ರವಾದಿಗಳು ಸದಾಕಾಲ ಇರುವರೆ?</verse>
				<verse number="6">ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”</verse>
				<verse number="7">ಡೇರಿಯಸನ ಆಳ್ವಿಕೆಯ ಎರಡನೇ ವರ್ಷದ ಹನ್ನೊಂದನೆಯ ತಿಂಗಳಿನ (ಅಂದರೆ ಶೆಬಾತ್ ತಿಂಗಳಿನ) ಇಪ್ಪತ್ತನಾಲ್ಕನೆಯ ದಿನದಲ್ಲಿ ಇದ್ದೋವಿನ ಮೊಮ್ಮಗನೂ ಬೆರೆಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಸರ್ವೇಶ್ವರ ಕೊಟ್ಟ ದರ್ಶನವಿದು:</verse>
				<verse number="8">ರಾತ್ರಿಯಲ್ಲಿ ನನಗೆ ಈ ದರ್ಶನವಾಯಿತು. ಇಗೋ, ಕೆಂಪು ಕುದುರೆಯನ್ನೇರಿದ್ದ ಒಬ್ಬ ವ್ಯಕ್ತಿ ತಗ್ಗಿನಲ್ಲಿರುವ ಸುಗಂಧ ವೃಕ್ಷಗಳ ನಡುವೆ ನಿಂತಿದ್ದಾನೆ. ಅವನ ಹಿಂದೆ ಕೆಂಪು, ನಸುಗೆಂಪು ಮತ್ತು ಬಿಳಿಯ ಕುದುರೆಗಳಿವೆ.</verse>
				<verse number="9">ನಾನು, ‘ಸ್ವಾಮೀ, ಇದೆಲ್ಲ ಏನು?’ ಎಂದು ಕೇಳಿದೆ. ಅದಕ್ಕೆ ಸೂತ್ರಧಾರಿಯಾದ ದೂತನು ನನ್ನೊಡನೆ ಮಾತನಾಡುತ್ತಾ ‘ಇದು ಏನನ್ನು ಸೂಚಿಸುತ್ತದೆಂಬುದನ್ನು ನಿನಗೆ ತೋರಿಸುತ್ತೇನೆ’ ಎಂದು ಹೇಳಿದ.</verse>
				<verse number="10">ಕೂಡಲೆ ಸುಗಂಧ ವೃಕ್ಷಗಳ ನಡುವೆ ಇದ್ದವನು: “ಇವರು ಲೋಕದ ವೀಕ್ಷಣಾರ್ಥವಾಗಿ ದೇವರಿಂದ ಕಳುಹಿಸಲ್ಪಟ್ಟವರು” ಎಂದು ಉತ್ತರಕೊಟ್ಟ.</verse>
				<verse number="11">ಆಗ ಅವರು ವೃಕ್ಷಗಳ ನಡುವೆ ನಿಂತಿದ್ದ ದೇವದೂತನಿಗೆ “ನಾವು ಲೋಕವನ್ನೆಲ್ಲ ವೀಕ್ಷಿಸಿಬಂದಿದ್ದೇವೆ. ಅದು ನಿಶ್ಚಿಂತೆಯಿಂದ ನೆಮ್ಮದಿಯಾಗಿದೆ,” ಎಂದು ವರದಿ ಮಾಡಿದರು.</verse>
				<verse number="12">ಆಗ ದೇವದೂತನು: “ಸೇನಾಧಿಶ್ವರ ಸರ್ವೇಶ್ವರಾ, ಕಳೆದ ಎಪ್ಪತ್ತು ವರ್ಷಗಳಿಂದ ನೀವು ಕೋಪದಿಂದಿರುವಿರಿ, ಏಕೆ? ಇನ್ನೆಷ್ಟು ಕಾಲ ಜೆರುಸಲೇಮಿಗೂ ಜುದೇಯದ ಇತರ ಪಟ್ಟಣಗಳಿಗೂ ಕರುಣೆತೋರಿಸದೆ ಇರುವಿರಿ?” ಎಂದು ಕೇಳಿದ.</verse>
				<verse number="13">ಆಗ ಸೂತ್ರಧಾರಿಯಾದ ದೂತನಿಗೆ ಸರ್ವೇಶ್ವರ ಕರುಣೆಯಿಂದ ಸದುತ್ತರ ಕೊಟ್ಟರು.</verse>
				<verse number="14">ಮತ್ತು ಆ ದೂತ ಹೀಗೆಂದು ನನಗೆ ಅಪ್ಪಣೆಮಾಡಿದ: “ಇದನ್ನು ನೀನು ಸಾರಿ ಹೇಳಬೇಕು. ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ - ಜೆರುಸಲೇಮಿನ ಹಾಗೂ ಸಿಯೋನಿನ ಮೇಲೆ ನನಗೆ ತುಂಬ ಅಭಿಮಾನವಿದೆ.</verse>
				<verse number="15">ನೆಮ್ಮದಿಯಿಂದ ಬಾಳುವ ರಾಷ್ಟ್ರಗಳ ಮೇಲೆ ಬಹಳ ಸಿಟ್ಟುಗೊಂಡಿದ್ದೇನೆ. ಏಕೆಂದರೆ, ನಾನು ಜೆರುಸಲೇಮಿನ ವಿರುದ್ಧ ಕಿಂಚಿತ್ತೇ ಕೋಪಗೊಂಡಿದ್ದಾಗ ಅವರು ಕೇಡಿಗೆ ಕೇಡು ಕೂಡಿಸಿಬಿಟ್ಟರು.</verse>
				<verse number="16">ಆದುದರಿಂದ ನಾನು ಕರುಣಾಮಯನಾಗಿ ಜೆರುಸಲೇಮಿಗೆ ಹಿಂದಿರುಗಿ ಬಂದಿದ್ದೇನೆ. ಅಲ್ಲಿ ನನ್ನ ಆಲಯವನ್ನು ಮರಳಿ ಕಟ್ಟಲಾಗುವುದು. ಜೆರುಸಲೇಮ್ ನಗರವನ್ನು ವಾಸ್ತುಶಿಲ್ಪಕ್ಕೆ ತಕ್ಕಂತೆ ನಿರ್ಮಿಸಲಾಗುವುದು. ಇದು ಸೇನಾಧೀಶ್ವರ ಸರ್ವೇಶ್ವರನ ನುಡಿ.”</verse>
				<verse number="17">“ಮತ್ತೊಮ್ಮೆ ನೀನು ಹೀಗೆಂದು ಘೋಷಿಸು: ‘ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ. ಇನ್ನು ನನ್ನ ಪಟ್ಟಣದಲ್ಲಿ ಸಿರಿಸಂಪತ್ತು ತುಂಬಿತುಳುಕುವುದು. ಸರ್ವೇಶ್ವರ ಸಿಯೋನನ್ನು ಪುನಃ ಸಂತೈಸುವರು. ಜೆರುಸಲೇಮ್ ನಗರವನ್ನು ಪುನಃ ತನ್ನದಾಗಿ ಆರಿಸಿಕೊಳ್ಳುವರು’.”</verse>
				<verse number="18">ಮತ್ತೊಂದು ದರ್ಶನದಲ್ಲಿ ನಾನು ನಾಲ್ಕು ಕೊಂಬುಗಳನ್ನು ಕಂಡೆನು.</verse>
				<verse number="19">“ಈ ಕೊಂಬುಗಳು ಏನನ್ನು ಸೂಚಿಸುತ್ತವೆ?” ಎಂದು ನಾನು ಕೇಳಿದಾಗ ಸೂತ್ರಧಾರಿಯಾದ ದೂತನು: ‘ಇವು ಜೂದ, ಇಸ್ರಯೇಲ್, ಮತ್ತು ಜೆರುಸಲೇಮಿನ ಪ್ರಜೆಗಳನ್ನು ಚದರಿಸಿಬಿಟ್ಟ ಕೊಂಬುಗಳು,’ ಎಂದನು.</verse>
				<verse number="20">ಅನಂತರ ಸರ್ವೇಶ್ವರ ನನಗೆ ನಾಲ್ಕುಮಂದಿ ಸುತ್ತಿಗೆ ಹಿಡಿದವರನ್ನು ತೋರಿಸಿದರು.</verse>
				<verse number="21">“ಇವರು ಏನು ಮಾಡುವುದಕ್ಕೆ ಬಂದಿದ್ದಾರೆ?” ಎಂದು ಕೇಳಿದಾಗ ಆತ: ಯೆಹೂದ್ಯರಲ್ಲಿ ಯಾರೂ ತಲೆಯೆತ್ತದಂತೆ ಅವುಗಳನ್ನು ಚದರಿಸುವ ಕೊಂಬುಗಳು ಅವು. ಇವರಾದರೆ ಜುದೇಯ ನಾಡನ್ನು ಚದರಿಸಬೇಕೆಂದು ತಲೆಯೆತ್ತಿದ ರಾಷ್ಟ್ರಗಳನ್ನೆ ಚದರಿಸಿ ಅವರ ಕೊಂಬುಗಳನ್ನು ಹೊಡೆದು ಕೆಡುವುವುದಕ್ಕೆ ಬಂದಿದ್ದಾರೆ,” ಎಂದು ಹೇಳಿದರು</verse>
			</chapter>
			<chapter number="2">
				<verse number="1">ನನಗೆ ಮತ್ತೊಂದು ದರ್ಶನವಾಯಿತು. ಕೈಯಲ್ಲಿ ಅಳತೆನೂಲನ್ನು ಹಿಡಿದುಕೊಂಡಿದ್ದ ಒಬ್ಬನು ಕಾಣಿಸಿಕೊಂಡ.</verse>
				<verse number="2">“ಎಲ್ಲಿಗೆ ಹೋಗುತ್ತಿರುವೆ?” ಎಂದು ನಾನು ಅವನನ್ನು ಕೇಳಿದಾಗ, ಅವನು: “ಜೆರುಸಲೇಮಿನ ಉದ್ದ - ಅಗಲ ಎಷ್ಟಿದೆಯೆಂದು ಅಳೆಯಲು ಹೋಗುತ್ತಿದ್ದೇನೆ,” ಎಂದು ಉತ್ತರಕೊಟ್ಟನು.</verse>
				<verse number="3">ಆಗ ಸೂತ್ರಧಾರಿಯಾದ ದೂತನು ಮುಂದೆ ಬರುತ್ತಿರಲು, ಇನ್ನೊಬ್ಬ ದೂತನು ಆತನನ್ನು ಎದುರಗೊಂಡು,</verse>
				<verse number="4">“ಅಳೆಯಲು ಹೋಗುತ್ತಿರುವ ಆ ಯುವಕನಿಗೆ ಓಡಿಹೋಗಿ ಈ ಮಾತನ್ನು ತಿಳಿಸು: ‘ಜೆರುಸಲೇಮಿನಲ್ಲಿ ಜನರ ಮತ್ತು ದನಕರುಗಳ ಸಂಖ್ಯೆ ಅಪಾರವಾಗುವುದು. ಅದು ಪೌಳಿಗೋಡೆಗಳಿಲ್ಲದ ಊರುಕೇರಿಗಳಂತೆ ಹರಡಿಕೊಳ್ಳುವುದು.</verse>
				<verse number="5">ನಾನೇ ಅದರ ಸುತ್ತಮುತ್ತಲು ಅಗ್ನಿ ಪ್ರಾಕಾರವಾಗಿ, ಅದರೊಳಗಿನ ವೈಭವವಾಗಿರುವೆನು. ಇದು ಸರ್ವೇಶ್ವರಸ್ವಾಮಿಯ ನುಡಿ,’ ಎಂದ.”</verse>
				<verse number="6">ಸರ್ವೇಶ್ವರ ತಮ್ಮ ಜನರಿಗೆ ಇಂತೆನ್ನುತ್ತಾರೆ: “ಚತುರ್ದಿಕ್ಕುಗಳಿಗೆ ನಿಮ್ಮನ್ನು ಚದರಿಸಿದವನು ನಾನೇ. ಆದರೆ ಈಗ ಎಚ್ಚೆತ್ತುಕೊಳ್ಳಿ, ಹೊರನಾಡುಗಳಿಂದ ಓಡಿಬನ್ನಿ, ಇದು ಸರ್ವೇಶ್ವರನ ನುಡಿ. ಬಾಬಿಲೋನಿಗೆ ಸೆರೆಹೋದ ಸಿಯೋನಿನವರೇ, ಅಲ್ಲಿಂದ ತಪ್ಪಿಸಿಕೊಂಡು ಬನ್ನಿ.</verse>
				<verse number="7"></verse>
				<verse number="8">ತಮ್ಮ ಮಹಿಮೆಯನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನು ಸೂರೆಮಾಡಿದ ರಾಷ್ಟ್ರಗಳಿಗೆ ಕೊಡುವ ಎಚ್ಚರಿಕೆ ಇದು:</verse>
				<verse number="9">‘ನಿಮ್ಮನ್ನು ಮುಟ್ಟುವವರು ನನ್ನ ಕಣ್ಮಣಿಯನ್ನೇ ಮುಟ್ಟಿದಂತೆ! ಇಗೋ, ನಾನು ಅವರ ಮೇಲೆ ಕೈಯೆತ್ತುವೆನು. ಅವರು ತಮ್ಮ ದಾಸರ ಕೈಯಿಂದಲೇ ಸೂರೆಯಾಗುವರು. ನನ್ನನ್ನು ಕಳುಹಿಸಿದವರು ಸೇನಾಧೀಶ್ವರ ಸರ್ವೇಶ್ವರ ಎಂಬುದು ಆಗ ನಿಮಗೆ ಗೊತ್ತಾಗುವುದು’.”</verse>
				<verse number="10">ಸರ್ವೇಶ್ವರ ಇಂತೆನ್ನುತ್ತಾರೆ: “ಎಲೈ ಸಿಯೋನ್ ನಗರವೇ, ಸಂತೋಷಪಡು, ಜಯಕಾರ ಮಾಡು; ಇಗೋ, ನಾನೇ ಬಂದು ನಿನ್ನ ಮಧ್ಯೆ ವಾಸಿಸುವೆನು!”</verse>
				<verse number="11">ಆ ದಿನದಂದು ಹಲವಾರು ರಾಷ್ಟ್ರಗಳು ಸರ್ವೇಶ್ವರಸ್ವಾಮಿಯನ್ನು ಆಶ್ರಯಿಸಿಕೊಳ್ಳುವರು. ಅವರು ಆ ಸ್ವಾಮಿಯ ಜನರಾಗುವರು. ಸ್ವಾಮಿ ಅವರ ಮಧ್ಯೆ ವಾಸಿಸುವರು. ಸೇನಾಧೀಶ್ವರರಾದ ಆ ಸ್ವಾಮಿಯೇ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ ಎಂಬುದು ಆಗ ನಿಮಗೆ ಗೊತ್ತಾಗುವುದು.</verse>
				<verse number="12">ಪವಿತ್ರಭೂಮಿಯಲ್ಲಿ ಜುದೇಯ ನಾಡನ್ನು ಸ್ವಾಮಿ ತಮ್ಮ ಸೊತ್ತಾಗಿ ಮಾಡಿಕೊಳ್ಳುವರು. ಜೆರುಸಲೇಮನ್ನು ತಮಗಾಗಿ ಮರಳಿ ಆರಿಸಿಕೊಳ್ಳುವರು.</verse>
				<verse number="13">ಸರ್ವೇಶ್ವರ ತಮ್ಮ ಪರಿಶುದ್ಧಾಲಯದಿಂದ ಹೊರಬರುತ್ತಿದ್ದಾರೆ. ನರಮಾನವರೇ, ಅವರ ಶ್ರೀಸನ್ನಿಧಿಯಲ್ಲಿ ನೀವೆಲ್ಲರು ಮೌನತಾಳಿರಿ.</verse>
			</chapter>
			<chapter number="3">
				<verse number="1">ಮತ್ತೊಂದು ದರ್ಶನದಲ್ಲಿ ಪ್ರಧಾನ ಯಾಜಕನಾದ ಯೆಹೋಶುವನು ದೂತನ ಮುಂದೆ ನಿಂತಿರುವುದನ್ನು ಸರ್ವೇಶ್ವರ ನನಗೆ ತೋರಿಸಿದರು. ಯೆಹೋಶುವನಿಗೆ ಪ್ರತಿವಾದಿಯಾಗಿ ಸೈತಾನನು ಅವನ ಪಕ್ಕದಲ್ಲಿ ನಿಂತಿದ್ದ.</verse>
				<verse number="2">ಆಗ ಸರ್ವೇಶ್ವರಸ್ವಾಮಿಯ ದೂತನು ಸೈತಾನನಿಗೆ: “ಸೈತಾನನೇ, ಸರ್ವೇಶ್ವರ ನಿನ್ನನ್ನು ಖಂಡಿಸಲಿ, ಜೆರುಸಲೇಮನ್ನು ಆರಿಸಿಕೊಂಡ ಸರ್ವೇಶ್ವರ ನಿನ್ನನ್ನು ಖಂಡಿಸಲಿ, ಈತ ಒಲೆಯಂತೆ ಹಿರಿದ ಬೆಂಕಿಕೊಳ್ಳಿ” ಎಂದನು.</verse>
				<verse number="3">ದೇವದೂತನ ಮುಂದೆ ನಿಂತಿದ್ದ ಯೆಹೋಶುವನು ಮಲಿನವಾದ ಬಟ್ಟೆಯನ್ನು ಧರಿಸಿದ್ದನು.</verse>
				<verse number="4">ತನ್ನ ಮುಂದೆ ನಿಂತಿದ್ದ ಸೇವಕರಿಗೆ ಆ ದೂತನು, “ಈತನ ಮಲಿನವಾದ ಬಟ್ಟೆಗಳನ್ನು ತೆಗೆದುಬಿಡಿ,” ಎಂದನು. ಅನಂತರ ಯೆಹೋಶುವನಿಗೆ, “ನಿನ್ನ ದೋಷವನ್ನು ತೊಲಗಿಸಿದ್ದೇನೆ. ಶ್ರೇಷ್ಠವಾದ ಬಟ್ಟೆಗಳನ್ನು ನಿನಗೆ ತೊಡಿಸುವೆನು,” ಎಂದನು.</verse>
				<verse number="5">“ಇವನ ತಲೆಗೆ ಶುಭ್ರವಾದ ಪೇಟವನ್ನು ಸುತ್ತಿರಿ,” ಎಂದು ಆ ದೂತನು ಅಪ್ಪಣೆಮಾಡಲು, ಸೇವಕರು ಯೆಹೋಶುವನ ತಲೆಗೆ ಪೇಟವನ್ನು ಸುತ್ತಿ ಶುಭ್ರ ವಸ್ತ್ರಗಳನ್ನು ತೊಡಿಸಿದರು. ದೇವದೂತನು ಅಲ್ಲಿಯೇ ನಿಂತಿದ್ದನು.</verse>
				<verse number="6">ಬಳಿಕ ದೇವದೂತನು ಯೆಹೋಶುವನಿಗೆ ಈ ಆಶ್ವಾಸನೆಯನ್ನು ಕೊಟ್ಟನು:</verse>
				<verse number="7">“ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ನೀನು ನನ್ನ ಮಾರ್ಗದಲ್ಲಿ ನಡೆದು, ನಾನು ನಿನಗೆ ವಹಿಸಿದ ಕಾರ್ಯವನ್ನು ನೆರವೇರಿಸಿದರೆ, ನನ್ನ ಆಲಯದ ಮುಖ್ಯಾಧಿಕಾರಿಯಾಗುವೆ. ಅದರ ವ್ಯಾಪ್ತಿಯಲ್ಲಿ ಉಳ್ಳ ಎಲ್ಲದಕ್ಕೂ ವ್ಯವಸ್ಥಾಪಕನಾಗುವೆ. ಈ ಸನ್ನಿಧಾನದ ದೂತರ ಮಧ್ಯೆ ಬಂದುಹೋಗುವ ಹಕ್ಕನ್ನು ನಿನಗೆ ಕೊಡುವೆನು.</verse>
				<verse number="8">ಪ್ರಧಾನ ಯಾಜಕನಾದ ಯೆಹೋಶುವನೇ, ನೀನೂ ಮತ್ತು ನಿನ್ನ ಜೊತೆಯಲ್ಲಿ ಉಪಸ್ಥಿತರಾದ ಸಹಯಾಜಕರೂ, ಕೇಳಲಿ: ನೀವು ಶುಭದಿನಗಳ ಮುಂಗುರುತು. ‘ಮೊಳಕೆ’ ಎಂಬಸೇವಕನೊಬ್ಬನು ಕಾಣಿಸಿಕೊಳ್ಳುವಂತೆ ಮಾಡುವೆನು.</verse>
				<verse number="9">ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡಿ. ಆ ಒಂದೇ ಕಲ್ಲಿನಲ್ಲಿ ಏಳು ಮುಖಗಳು ಇರುವ ಒಂದು ಕೆತ್ತನೆಯನ್ನು ಕೆತ್ತುವೆನು. ಒಂದೇ ದಿನದಲ್ಲಿ ಈ ನಾಡಿನ ಪಾಪವನ್ನು ತೊಡೆದುಹಾಕುವೆನು.</verse>
				<verse number="10">ಆ ದಿನದಂದು ನೀವೆಲ್ಲರೂ ನಿಮ್ಮ ನಿಮ್ಮ ನೆರೆಹೊರೆಯವರನ್ನು ದ್ರಾಕ್ಷಾಲತೆಗಳ ಹಾಗೂ ಅಂಜೂರದ ಗಿಡಗಳ ನೆರಳಿನಲ್ಲಿ ಸಮಾಧಾನದಿಂದ ವಿಶ್ರಮಿಸಲು ಕರೆಯುವಿರಿ. ಇದು ಸೇನಾಧಿಶ್ವರ ಸರ್ವೇಶ್ವರಸ್ವಾಮಿಯ ನುಡಿ.”</verse>
			</chapter>
			<chapter number="4">
				<verse number="1">ಅನಂತರ ಸೂತ್ರಧಾರಿಯಾದ ದೂತನು ಮತ್ತೆ ಬಂದು ನಿದ್ರೆ ಹತ್ತಿದವನಂತಿದ್ದ ನನ್ನನ್ನು ಎಚ್ಚರಗೊಳಿಸಿದನು.</verse>
				<verse number="2">“ಏನನ್ನು ನೋಡುತ್ತಿರುವೆ?” ಎಂದು ಅವನು ನನ್ನನ್ನು ಕೇಳಿದಾಗ ನಾನು, “ಇಗೋ, ಏಳು ದೀಪಗಳುಳ್ಳ ಸುವರ್ಣಮಯ ದೀಪಸ್ತಂಭವೊಂದನ್ನು ನೋಡುತ್ತಿದ್ದೇನೆ. ಅದರ ಮೇಲ್ಗಡೆ ಎಣ್ಣೆಯ ಪಾತ್ರೆ ಇದೆ. ಅದರ ಮೇಲೆ ದೀಪಗಳಿಗೆ ಏಳು ನಾಳಗಳಿವೆ.</verse>
				<verse number="3">ದೀಪಸ್ತಂಭದ ಪಕ್ಕದಲ್ಲಿ ಬಲಗಡೆ ಒಂದು, ಎಡಗಡೆ ಇನ್ನೊಂದು - ಹೀಗೆ ಎರಡು ಎಣ್ಣೆಯ ಮರಗಳಿವೆ,” ಎಂದನು.</verse>
				<verse number="4">ಸೂತ್ರಧಾರಿ ಆದ ಆ ದೂತನನ್ನು, “ಸ್ವಾಮೀ, ಇದು ಏನನ್ನು ಸೂಚಿಸುತ್ತದೆ?” ಎಂದು ಕೇಳಿದೆ.</verse>
				<verse number="5">ಅದಕ್ಕೆ ಆ ದೂತನು, “ಇದು ಏನೆಂದು ನಿನಗೆ ತಿಳಿಯುವುದಿಲ್ಲವೋ? ಎಂದು ಪ್ರಶ್ನಿಸಿದನು. ಅದಕ್ಕೆ ನಾನು, “ಇಲ್ಲ, ಸ್ವಾಮೀ” ಎಂದು ಉತ್ತರಕೊಟ್ಟೆ.</verse>
				<verse number="6"></verse>
				<verse number="7"></verse>
				<verse number="8"></verse>
				<verse number="9"></verse>
				<verse number="10">ಆಗ ದೂತನು, “ಈ ಸ್ತಂಭದಲ್ಲಿರುವ ಏಳು ದೀಪಗಳು ಭೂಲೋಕದ ಎಲ್ಲಾ ಭಾಗಗಳನ್ನು ವೀಕ್ಷಿಸುವ ಸರ್ವೇಶ್ವರಸ್ವಾಮಿಯ ಏಳು ಕಣ್ಣುಗಳನ್ನು ಸೂಚಿಸುತ್ತವೆ,” ಎಂದನು.</verse>
				<verse number="11">ಪುನಃ ನಾನು ದೇವದೂತನನ್ನು, “ದೀಪಸ್ತಂಭದ ಎಡಬಲಗಳಲ್ಲಿರುವ ಎಣ್ಣೆಮರಗಳು ಏನನ್ನು ಸೂಚಿಸುತ್ತವೆ?” ಎಂದು ಕೇಳಿದೆ.</verse>
				<verse number="12">(ಮತ್ತೆ ಅವನನ್ನು - “ತಮ್ಮೊಳಗಿಂದ ಚಿನ್ನದಂಥ ಎಣ್ಣೆಯನ್ನು ಪಾತ್ರೆಯಲ್ಲಿ ತುಂಬಿಸುವ ಎರಡು ಬಂಗಾರದ ನಾಳಗಳಿವೆಯಲ್ಲಾ; ಆ ನಾಳಗಳ ಬಾಯಿಗೆ ಸೇರಿರುವ ಎರಡು ಎಣ್ಣೆಕಾಯಿಗುತ್ತಿಗಳು ಏನು?” ಎಂದು ಕೇಳಿದೆ.)</verse>
				<verse number="13">ಅದಕ್ಕೆ ಆ ದೂತನು: “ಅವು ಏನೆಂದು ನಿನಗೆ ತಿಳಿಯುವುದಿಲ್ಲವೋ” ಎಂದು ಕೇಳಿದಾಗ ನಾನು: “ಇಲ್ಲ, ಸ್ವಾಮೀ,” ಎಂದೆ.</verse>
				<verse number="14">ಅದಕ್ಕೆ ಅವನು, “ಇವು ದೇವರಿಂದ ಆಯ್ಕೆಯಾಗಿ ಎಣ್ಣೆಯಿಂದ ಅಭಿಷಿಕ್ತರಾದ ಇಬ್ಬರು ವ್ಯಕ್ತಿಗಳನ್ನು ಸೂಚಿಸುತ್ತವೆ. ಸರ್ವಲೋಕದ ಒಡೆಯನ ಸನ್ನಿಧಿಯಲ್ಲಿರುವ ಸೇವಕರನ್ನು ಸೂಚಿಸುತ್ತವೆ,” ಎಂದನು. ಜೆರುಬ್ಬಾಬೆಲನಿಗೆ ದೇವರಿತ್ತ ವಾಗ್ದಾನ ದೂತನು ನನಗೆ ಹೀಗೆಂದು ಹೇಳಿದನು: “ಜೆರುಬ್ಬಾಬೆಲನಿಗೆ ಈ ಸಂದೇಶವನ್ನು ಕೊಡು - ನಿನಗೆ ಜಯ ದೊರಕುವುದು. ನಿನ್ನ ಶಕ್ತಿಸಾಮರ್ಥ್ಯದಿಂದಲ್ಲ, ಸೇನಾಬಲದಿಂದಲೂ ಅಲ್ಲ; ನನ್ನ ಆತ್ಮಶಕ್ತಿಯಿಂದ, ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ಅಡ್ಡಿ ಅಡಚಣೆಗಳು ಬೆಟ್ಟದಂತಿದ್ದರೂ ನೀನು ದೇವಾಲಯವನ್ನು ಕಟ್ಟುವೆ. ಅಂತ್ಯದಲ್ಲಿ ಕಲಶವನ್ನು ಸ್ಥಾಪಿಸುವಾಗ ಜನರು ‘ಎಷ್ಟು ರಮ್ಯ! ಎಷ್ಟು ಸುಂದರ!’ ಎಂದು ಉದ್ಗರಿಸುವರು.” ಸರ್ವೇಶ್ವರ ನನಗೆ ಇನ್ನೊಂದು ಸಂದೇಶವಿತ್ತರು: “ಜೆರುಬ್ಬಾಬೆಲನು ಮಹಾದೇವಾಲಯದ ಕಟ್ಟಡಕ್ಕೆ ಅಸ್ತಿಭಾರವನ್ನು ಹಾಕಿದ್ದಾನೆ. ಆ ಕಟ್ಟಡವನ್ನು ಅವನೇ ಪೂರೈಸುವನು. ನಿನ್ನನ್ನು ಜನರ ಬಳಿಗೆ ಕಳುಹಿಸಿದಾತ ಸೇನಾಧೀಶ್ವರ ಸರ್ವೇಶ್ವರ ಎಂದು ಆಗ ಸರ್ವರಿಗೆ ಗೊತ್ತಾಗುವುದು. ಪ್ರಾರಂಭದಲ್ಲಿ ಚಿಕ್ಕಕಾರ್ಯಗಳನ್ನು ನೋಡಿ ಪರಿಹಾಸ್ಯಮಾಡಿದವರು ಆಗ ಜೆರುಬ್ಬಾಬೆಲನ ಕೈಯಲ್ಲಿ ಅಳತೆನೂಲಿನ ಗುಂಡನ್ನು ಕಂಡು ಸಂತೋಷಪಡುವರು.”</verse>
			</chapter>
			<chapter number="5">
				<verse number="1">ಪುನಃ ನಾನು ಕಣ್ಣೆತ್ತಿ ನೋಡಲು, ಇಗೋ, ಹಾರುತ್ತಿರುವ ಒಂದು ಸುರುಳಿ ಕಾಣಿಸಿತು.</verse>
				<verse number="2">ದೂತನು ನನ್ನನ್ನು, “ನಿನಗೆ ಏನು ಕಾಣಿಸುತ್ತಿದೆ?” ಎಂದು ಕೇಳಿದನು. ಅದಕ್ಕೆ ನಾನು “ಹಾರುತ್ತಿರುವ ಪತ್ರದ ಸುರುಳಿ ಕಾಣಿಸುತ್ತಿದೆ. ಅದರ ಉದ್ದ ಒಂಬತ್ತು ಮೀಟರ್, ಅಗಲ ನಾಲ್ಕುವರೆ ಮೀಟರ್,” ಎಂದು ಉತ್ತರಕೊಟ್ಟೆ.</verse>
				<verse number="3">ಆಗ ಅವನು ನನಗೆ “ನಾಡಿನ ಮೇಲೆ ಬಂದೆರಗಲಿರುವ ಶಾಪ ಅದರಲ್ಲಿ ಲಿಖಿತ ಆಗಿದೆ. ಒಂದು ಕಡೆ ಬರೆದಿರುವಂತೆ, ಪ್ರತಿಯೊಬ್ಬ ಕಳ್ಳನನ್ನು ನಾಡಿನಿಂದ ಹೊರದೂಡಲಾಗುವುದು. ಮತ್ತೊಂದು ಕಡೆ ಬರೆದಿರುವಂತೆ, ಸುಳ್ಳಾಣೆ ಇಡುವ ಪ್ರತಿಯೊಬ್ಬನನ್ನೂ ನಾಡಿನಿಂದ ಹೊರದೂಡಲಾಗುವುದು.</verse>
				<verse number="4">ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ನಾನು ಶಾಪವನ್ನು ಕಳುಹಿಸುತ್ತೇನೆ. ಅದು ಕಳ್ಳನ ಮನೆಯನ್ನೂ ನನ್ನ ಹೆಸರೆತ್ತಿ ಸುಳ್ಳಾಣೆಯಿಡುವವನ ಮನೆಯನ್ನೂ ಹೊಕ್ಕು, ಅಲ್ಲಿ ತಂಗಿದ್ದು ಅದನ್ನು ಕಲ್ಲುಮರ ಸಹಿತ ಸಂಪೂರ್ಣವಾಗಿ ಭಸ್ಮಮಾಡುವುದು,” ಎಂದನು.</verse>
				<verse number="5">ಅನಂತರ ಸೂತ್ರಧಾರಿಯಾದ ದೂತನು ನನ್ನ ಬಳಿ ಬಂದು: “ಮತ್ತೊಂದು ಏನೋ ಬರುತ್ತಿದೆ, ನೋಡು,” ಎಂದನು.</verse>
				<verse number="6">“ಏನದು?” ಎಂದು ನಾನು ವಿಚಾರಿಸಲು, ಅವನು, “ನಿನಗೆ ಕಾಣಿಸುತ್ತಿರುವ ಆ ವಸ್ತು ಒಂದು ಕೊಳಗದ ಪಾತ್ರೆ,” ಎಂದನು. ಅಲ್ಲದೆ, “ಅದು ಇಡೀ ನಾಡಿನ ಅಧರ್ಮದ ಪ್ರತೀಕ,” ಎಂದನು.</verse>
				<verse number="7">ಆಗ ಕೊಳಗದ ತಟ್ಟೆಯಾಕಾರದ ಮುಚ್ಚಳವು ತೆಗೆಯಲಾಯಿತು. ಇಗೋ, ಅದರಲ್ಲಿ ಮಹಿಳೆಯೊಬ್ಬಳು ಕುಳಿತಿದ್ದಳು.</verse>
				<verse number="8">ಸೂತ್ರಧಾರಿಯಾದ ದೂತನು: “ಇವಳೇ ಪಾಪದ ಪ್ರತೀಕ,” ಎಂದು ಹೇಳಿ, ಅವಳನ್ನು ಕೊಳಗದೊಳಗೆ ಅದುಮಿ, ಭಾರವಾದ ಆ ಸೀಸದ ಮುಚ್ಚಳವನ್ನು ತಟ್ಟನೆ ಕೊಳಗದ ಬಾಯಿಗಿಟ್ಟು ಮುಚ್ಚಿಬಿಟ್ಟನು.</verse>
				<verse number="9">ಪುನಃ ನಾನು ಕಣ್ಣೆತ್ತಿ ನೋಡಲು, ಇಗೋ, ಕೊಕ್ಕರೆಯ ರೆಕ್ಕೆಗಳಂತಿರುವ ರಭಸವಾದ ರೆಕ್ಕೆಗಳುಳ್ಳ ಇಬ್ಬರು ಮಹಿಳೆಯರು ಬರುತ್ತಿರುವುದನ್ನು ಕಂಡೆನು. ಅವರು ಕೊಳಗದ ಪಾತ್ರೆಯನ್ನು ಎತ್ತಿಕೊಂಡು ಹಾರಿಹೋದರು.</verse>
				<verse number="10">“ಅವರು ಕೊಳಗವನ್ನು ಎಲ್ಲಿಗೆ ಎತ್ತಿಕೊಂಡು ಹೋಗುತ್ತಿದ್ದಾರೆ?” ಎಂದು ನಾನು ಕೇಳಿದೆ.</verse>
				<verse number="11">ಅದಕ್ಕೆ ಸೂತ್ರಧಾರಿಯಾದ ದೂತನು, “ಬಾಬಿಲೋನಿಯಾ ದೇಶಕ್ಕೆ: ಅಲ್ಲಿ ಅವಳಿಗೆ ಗುಡಿಕಟ್ಟುವುದಕ್ಕಾಗಿ ಹೋಗುತ್ತಿದ್ದಾರೆ. ಅದು ಸಿದ್ಧವಾದಾಗ ಅಲ್ಲಿನ ಪೀಠದ ಮೇಲೆ ಆ ಕೊಳಗವನ್ನು ಪ್ರತಿಷ್ಠಾಪಿಸಲಾಗುವುದು,” ಎಂದನು.</verse>
			</chapter>
			<chapter number="6">
				<verse number="1">ನನಗೆ ಇನ್ನೊಂದು ದರ್ಶನವಾಯಿತು: ಇಗೋ, ಎರಡು ಬೆಟ್ಟಗಳ ನಡುವೆ ಬರುತ್ತಿರುವ ನಾಲ್ಕು ರಥಗಳು ಕಾಣಿಸಿದವು. ಅವು ಕಂಚಿನ ಬೆಟ್ಟಗಳಾಗಿದ್ದವು.</verse>
				<verse number="2">ಮೊದಲನೆಯ ರಥಕ್ಕೆ ಕೆಂಪು ಕುದುರೆಗಳು, ಎರಡನೆಯ ರಥಕ್ಕೆ ಕಪ್ಪು ಕುದುರೆಗಳು,</verse>
				<verse number="3">ಮೂರನೆಯ ರಥಕ್ಕೆ ಬಿಳೀ ಕುದುರೆಗಳು, ನಾಲ್ಕನೆಯ ರಥಕ್ಕೆ ಮಚ್ಚೆ ಮಚ್ಚೆಯ ಬಲವಾದ ಕುದುರೆಗಳು ಕಟ್ಟಿದ್ದವು.</verse>
				<verse number="4">ಆಗ, “ಸ್ವಾಮೀ, ಇದೆಲ್ಲ ಏನು?” ಎಂದು ಸೂತ್ರಧಾರಿಯಾದ ದೂತನನ್ನು ಪ್ರಶ್ನಿಸಿದೆ.</verse>
				<verse number="5">ಅದಕ್ಕೆ ದೂತನು, “ಇವು ಆಕಾಶದ ನಾಲ್ಕು ಮಾರುತಗಳು; ಭೂಲೋಕದೊಡೆಯನ ಸಾನ್ನಿಧ್ಯದಿಂದ ಇದೀಗಲೆ ಹೊರಟುಬಂದಿವೆ,” ಎಂದನು.</verse>
				<verse number="6">ಕಪ್ಪು ಕುದುರೆಗಳ ರಥ ಉತ್ತರ ದೇಶಕ್ಕೆ ಹೊರಟಿತು. ಬಿಳಿ ಕುದುರೆಗಳ ರಥ ಅದನ್ನು ಹಿಂಬಾಲಿಸಿ ಪಶ್ಚಿಮಕ್ಕೆ ಹೋಯಿತು. ಮಚ್ಚೆ ಕುದುರೆಗಳ ರಥ ದಕ್ಷಿಣ ದೇಶಕ್ಕೆ ತೆರಳಿತು.</verse>
				<verse number="7">“ಕೆಂಪು ಕುದುರೆಗಳು ಲೋಕದಲ್ಲೆಲ್ಲ ಗಸ್ತು ತಿರುಗಿ,” ಎಂದು ಅಪ್ಪಣೆಮಾಡಲು, ಅವು ಅಂತೆಯೇ ಮಾಡಿದವು.</verse>
				<verse number="8">ಆಮೇಲೆ ದೂತನು ನನಗೆ, “ಉತ್ತರ ದೇಶಕ್ಕೆ ಹೊರಟ ಕುದುರೆಗಳ ರಥ ಸರ್ವೇಶ್ವರಸ್ವಾಮಿಯ ಕೋಪವನ್ನು ಶಮನಗೊಳಿಸಿದೆ,” ಎಂದು ಕೂಗಿ ಹೇಳಿದನು.</verse>
				<verse number="9">ಸರ್ವೇಶ್ವರ ನನಗಿತ್ತ ಆದೇಶವಿದು:</verse>
				<verse number="10">“ಈ ದಿನವೇ ಜೆಫನ್ಯನ ಮಗನಾದ ಯೋಷೀಯನ ಮನೆಗೆ ಹೋಗು, ಬಾಬಿಲೋನಿಗೆ ಸೆರೆಹೋಗಿ ಮರಳಿ ಬಂದಿಳಿದಿರುವ ಹೆಲ್ದಾಯ, ತೊಬೀಯ, ಯೆದಾಯ ಎಂಬವರಿಂದ ಕಾಣಿಕೆಯನ್ನು ಸ್ವೀಕರಿಸು.</verse>
				<verse number="11">ಅವರಿಂದ ಪಡೆದ ಬೆಳ್ಳಿಬಂಗಾರಗಳನ್ನು ತೆಗೆದುಕೊಂಡು ಒಂದು ಕಿರೀಟವನ್ನು ಮಾಡಿಸು. ಅದನ್ನು ಯೆಹೋಚಾದಾಕನ ಮಗನೂ ಮಹಾಯಾಜಕನೂ ಆದ ಯೆಹೋಶುವನ ತಲೆಗೆ ತೊಡಿಸು.</verse>
				<verse number="12">ಮತ್ತು ಅವನಿಗೆ ಹೀಗೆಂದು ಹೇಳು: ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: ಮೊಳಕೆಯೆಂಬ ಪುರುಷನು ಮೂಡುವನು! ಆತನು ಇದ್ದ ಸ್ಥಳದಲ್ಲಿಯೇ ಅರಳಿ ಸರ್ವೇಶ್ವರನ ಆಲಯವನ್ನು ಕಟ್ಟಿಸುವನು.</verse>
				<verse number="13">ಹೌದು, ಅವನೇ ಸರ್ವೇಶ್ವರನ ಆಲಯವನ್ನು ಕಟ್ಟಿಸಿದ ಮೇಲೆ, ರಾಜವೈಭವವನ್ನು ತಾಳಿ ತನ್ನ ಸಿಂಹಾಸನದಲ್ಲಿ ಆಸೀನನಾಗಿ ಆಳುವನು. ಯಾಜಕನೊಬ್ಬನು ಅವನ ಆಸ್ಥಾನದಲ್ಲಿರುವನು. ಅವರಿಬ್ಬರೂ ಶಾಂತಿಸಮಾಧಾನದಿಂದಿರುವರು.</verse>
				<verse number="14">ಅವರ ಕಿರೀಟವು ಹೇಲಮ್, ತೊಬೀಯ, ಯೆದಾಯ ಮತ್ತು ಜೆಫನ್ಯನ ಮಗ ಹೇನ್ - ಇವರ ಜ್ಞಾಪಕಾರ್ಥವಾಗಿ ಆಲಯದಲ್ಲೇ ಇರುವುದು.”</verse>
				<verse number="15">ದೂರದಲ್ಲಿ ವಾಸಿಸುವ ಜನರು ಅಲ್ಲಿಗೆ ಬಂದು ಸರ್ವೇಶ್ವರಸ್ವಾಮಿಯ ಆಲಯವನ್ನು ಕಟ್ಟುವುದಕ್ಕೆ ನೆರವಾಗುವರು. ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯೇ ಎಂಬುದು ನಿಮಗೆ ಮನದಟ್ಟಾಗುವುದು. ನಿಮ್ಮ ದೇವರಾದ ಆ ಸ್ವಾಮಿಯ ಮಾತನ್ನು ನೀವು ಮನಃಪೂರ್ವಕವಾಗಿ ಅನುಸರಿಸಿದರೆ ಇದೆಲ್ಲವೂ ಸರಿಯಾಗಿ ನೆರವೇರುವುದು.</verse>
			</chapter>
			<chapter number="7">
				<verse number="1">ಅರಸನಾದ ಡೇರಿಯಸನ ಆಳ್ವಿಕೆಯ ನಾಲ್ಕನೆಯ ವರ್ಷದ ಒಂಭತ್ತನೆಯ ತಿಂಗಳ (ಅಂದರೆ ಕಿಸ್ಲೇವ್ ತಿಂಗಳಿನ) ನಾಲ್ಕನೆಯ ದಿನದಲ್ಲಿ ಸರ್ವೇಶ್ವರ ಜೆಕರ್ಯನಿಗೆ ಒಂದು ಸಂದೇಶವನ್ನು ಅನುಗ್ರಹಿಸಿದರು.</verse>
				<verse number="2">ಅಷ್ಟರಲ್ಲಿ ಬೇತೇಲಿನ ಜನರು ಸರೆಚರನನ್ನು ರೆಗೆಮ್ ಮೆಲೆಕ್‍ನನ್ನು ಹಾಗೂ ಅವನ ಪರಿಜನರನ್ನು ಸರ್ವೇಶ್ವರಸ್ವಾಮಿಯ ಆಶೀರ್ವಾದವನ್ನು ಕೋರಲು ದೇವಾಲಯಕ್ಕೆ ಕಳುಹಿಸಿದ್ದರು.</verse>
				<verse number="3">ಅಲ್ಲದೆ, ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೇವಾಲಯದ ಯಾಜಕರನ್ನೂ ಪ್ರವಾದಿಗಳನ್ನೂ ಕಂಡು, “ನಾವು ಇಷ್ಟು ವರ್ಷಗಳಿಂದ ಅನುಸರಿಸಿಕೊಂಡು ಬಂದಂತೆ, 5ನೆಯ ತಿಂಗಳಲ್ಲಿ ಉಪವಾಸವಿದ್ದು ಪ್ರಲಾಪಿಸಬೇಕೋ?” ಎಂದು ವಿಚಾರಿಸಿಕೊಂಡು ಬರಬೇಕೆಂದು ಅವರಿಗೆ ಆಜ್ಞಾಪಿಸಿದರು.</verse>
				<verse number="4">ಇಂತಿರಲು, ಸೇನಾಧೀಶ್ವರ ಸರ್ವೇಶ್ವರ ನನಗೆ ಈ ಸಂದೇಶವನ್ನು ದಯಪಾಲಿಸಿದರು”</verse>
				<verse number="5">“ಯಾಜಕರಿಗೂ ನಾಡಿನ ಸಕಲ ಜನರಿಗೂ ಹೀಗೆಂದು ತಿಳಿಸಲು: ನೀವು ಕಳೆದ ಎಪ್ಪತ್ತು ವರ್ಷಗಳಿಂದ 5ನೇ ಮತ್ತು 7ನೇ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡಿದ್ದು ನನಗೋಸ್ಕರವೋ?</verse>
				<verse number="6">ನೀವು ಭೋಜನ ಮಾಡಿದ್ದು, ಪಾನಮಾಡಿದ್ದು ನಿಮ್ಮ ತೃಪ್ತಿಗಾಗಿಯೇ ಅಲ್ಲವೆ?”</verse>
				<verse number="7">“ಜೆರುಸಲೇಮ್ ಮತ್ತು ಅದರ ಸುತ್ತಮುತ್ತಲಿನ ಪಟ್ಟಣಗಳು ಜನಭರಿತವಾಗಿ ನೆಮ್ಮದಿಯಿಂದಿದ್ದಾಗ ಹಾಗೂ ದಕ್ಷಿಣ ಪ್ರಾಂತ್ಯದಲ್ಲೂ ಬಯಲು ಪ್ರದೇಶದಲ್ಲೂ ಪ್ರಜೆಯು ತುಂಬಿದ್ದಾಗ ಪ್ರವಾದಿಗಳ ಮುಖಾಂತರ ಪ್ರಕಟಿಸಿದ ಸಂದೇಶ ಇದೇ ಅಲ್ಲವೆ?”</verse>
				<verse number="8">ಅಲ್ಲದೆ ಸರ್ವೇಶ್ವರ ಜೆಕರ್ಯನಿಗೆ ಕೊಟ್ಟ ಸಂದೇಶ ಏನೆಂದರೆ:</verse>
				<verse number="9">:ಸತ್ಯಾನುಸಾರ ನ್ಯಾಯತೀರಿಸಿರಿ.</verse>
				<verse number="10">ಒಬ್ಬರಿಗೊಬ್ಬರು ಪ್ರೀತಿ ಕರುಣೆಯನ್ನು ತೋರಿಸಿರಿ. ವಿಧವೆಯರು, ಅನಾಥರು, ವಿದೇಶಿಯರು, ಬಡವರು, ಇವರಾರನ್ನೂ ಶೋಷಣೆಮಾಡಬೇಡಿ. ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.</verse>
				<verse number="11">“ನಿಮ್ಮ ಪೂರ್ವಜರು ಕಿವಿಗೊಡದೆಹೋದರು: ಹಟಮಾರಿಗಳಾದರು; ಮಂದಮತಿಗಳಾದರು; ಅವರ ಹೃದಯ ಗೋರ್ಕಲ್ಲಿನಂತೆ ಆಯಿತು.</verse>
				<verse number="12">ಧರ್ಮಶಾಸ್ತ್ರವನ್ನಾಗಲೀ ಪೂರ್ವಕಾಲದ ಪ್ರವಾದಿಗಳ ಮುಖಾಂತರ, ಸೇನಾಧಿಶ್ವರ ಸರ್ವೇಶ್ವರ ಆದ ನಾನು ತಿಳಿಸಿದ ನನ್ನಾತ್ಮಪ್ರೇರಿತ ಮಾತುಗಳನ್ನಾಗಲೀ ಕೇಳದೆಹೋದರು. ಹೀಗೆ ನನ್ನ ಕಡುಕೋಪಕ್ಕೆ ಗುರಿಯಾದರು.</verse>
				<verse number="13">ಆಗ ಹೀಗೆಂದೆ: ‘ನಾನು ಕೂಗಿದಾಗ ಅವರು ಕೇಳದೆಹೋದರು; ಅವರು ಕೂಗಿದಾಗ ನಾನು ಕೇಳಲಿಲ್ಲ.’</verse>
				<verse number="14">ಬಿರುಗಾಳಿಯಂತೆ ಅವರನ್ನು ಅಪರಿಚಿತ ಜನಾಂಗಗಳ ಮಧ್ಯೆ ತೂರಿ ಚದರಿಬಿಟ್ಟೆ; ಹಾಗೆ ಅವರು ಚದರಿಹೋದ ಮೇಲೆ ನಾಡು ಹಾಳಾಯಿತು. ಅಲ್ಲಿ ಯಾರೂ ಉಳಿಯದಂತಾಯಿತು. ಅವರ ನಿಮಿತ್ತ ಚೆಲುವ ನಾಡು ನಿರ್ಜನ ಪ್ರದೇಶವಾಯಿತು.”</verse>
			</chapter>
			<chapter number="8">
				<verse number="1">ಸೇನಾಧೀಶ್ವರ ಸರ್ವೇಶ್ವರ ಜೆಕರ್ಯನಿಗೆ ಪುನಃ ಕೊಟ್ಟ ಸಂದೇಶವಿದು:</verse>
				<verse number="2">“ಸಿಯೋನಿನ ವಿಷಯದಲ್ಲಿ ನನಗೆ ತುಂಬಾ ಅಭಿಮಾನವಿದೆ. ಅದರ ಶತ್ರುಗಳ ವಿಷಯದಲ್ಲಿ ಅಧಿಕ ರೋಷವಿದೆ.”</verse>
				<verse number="3">ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನಿಗೆ ಹಿಂದಿರುಗುವೆನು. ಜೆರುಸಲೇಮಿನ ನಡುವೆ ವಾಸಮಾಡುವೆನು. ಆಗ ಜೆರುಸಲೇಮ್ ‘ನಿಷ್ಠಾವಂತ ನಗರ’ ಎನಿಸಿಕೊಳ್ಳುವುದು. ಅದಕ್ಕೆ ಸೇನಾಧೀಶ್ವರನ ಪರ್ವತ, ಪವಿತ್ರ ಪರ್ವತ ಎಂಬ ಹೆಸರು ಬರುವುದು.”</verse>
				<verse number="4">ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ಮುದುಕರು, ಮುದುಕಿಯರು ಮತ್ತೆ ಜೆರುಸಲೇಮಿನ ಚೌಕಗಳಲ್ಲಿ ಕುಳಿತುಕೊಳ್ಳುವರು. ವೃದ್ಧಾಪ್ಯದ ಪ್ರಯುಕ್ತ ಒಬ್ಬೊಬ್ಬರ ಕೈಯಲ್ಲಿ ಊರುಗೋಲು ಇರುವುದು.</verse>
				<verse number="5">ಪಟ್ಟಣದ ಹಾದಿಬೀದಿಗಳಲ್ಲಿ ಮಕ್ಕಳು ತುಂಬಿಕೊಂಡಿರುವರು.”</verse>
				<verse number="6">ಸೇನಾಧೀಶ್ವರ ಸರ್ವೇಶ್ವರ ಹೀಗೆನ್ನುತ್ತಾರೆ: “ಅಳಿದುಳಿದಿರುವ ಜನರಿಗೆ ಇಂಥ ಪರಿಸ್ಥಿತಿ ಅತಿಶಯವಾಗಿ ಕಾಣಬಹುದು. ಆದರೆ ನನಗೆ ಅದೇನೂ ಅತಿಶಯವಲ್ಲ.” ಇದು ಸರ್ವೇಶ್ವರನ ನುಡಿ.</verse>
				<verse number="7">ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇಗೋ, ನಾನು ನನ್ನ ಜನರನ್ನು ಪೂರ್ವಪಶ್ಚಿಮ ನಾಡುಗಳಿಂದ ಬಿಡುಗಡೆಮಾಡಿ, ಇಲ್ಲಿಗೆ ಬರಮಾಡುವೆನು.</verse>
				<verse number="8">ಅವರು ಜೆರುಸಲೇಮಿನಲ್ಲೇ ವಾಸವಾಗಿರುವರು. ನಾನು ಅವರಿಗೆ ದೇವರಾಗಿರುವೆನು; ಅವರು ನನಗೆ ಸತ್ಸಂಬಂಧವುಳ್ಳ ಸದ್ಧರ್ಮದ ಪ್ರಜೆಗಳಾಗಿರುವರು.”</verse>
				<verse number="9">ಸೇನಾಧೀಶ್ವರ ಸರ್ವೇಶ್ವರ ಹೀಗೆಂದಿದ್ದಾರೆ: “ನಿಮ್ಮ ಕೈ ಮುಂದಾಗಲಿ. ಈಗ ನೀವು ಕೇಳುತ್ತಿರುವ ಮಾತುಗಳು ಮಹಾದೇವಾಲಯಕ್ಕೆ ಅಸ್ತಿಭಾರವನ್ನು ಹಾಕಿದ ಕಾಲದಲ್ಲಿ ಪ್ರವಾದಿಗಳು ಆಡಿದ ಮಾತುಗಳೇ.</verse>
				<verse number="10">ಆ ಕಾಲಕ್ಕೆ ಹಿಂದೆ ಆಳುಗಳಿಗೆ ಕೂಲಿ ಕೊಡುವುದಕ್ಕಾಗಲೀ ಎತ್ತುಗಾಡಿಗಳಿಗೆ ಬಾಡಿಗೆ ಕೊಡುವುದಕ್ಕಾಗಲೀ ಯಾರಿಗೂ ಶಕ್ತಿ ಇರಲಿಲ್ಲ. ನಾಡಿನಿಂದ ಹೋಗುವವರಿಗಾಗಲೀ ನಾಡಿನೊಳಗೆ ಪ್ರವೇಶಿಸುವವರಿಗಾಗಲಿ ಶತ್ರುಗಳ ಕಾಟದಿಂದ ರಕ್ಷಣೆ ಇರಲಿಲ್ಲ. ಒಬ್ಬರಿಗೊಬ್ಬರು ಹಗೆಗಳಾಗಿರುವಂತೆ ಮಾಡಿದ್ದೆ.</verse>
				<verse number="11">ಇನ್ನು ಮೇಲಾದರೋ, ಅಳಿದುಳಿದ ಜನರಿಗೆ ಹಾಗೆ ಮಾಡೆನು. ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.</verse>
				<verse number="12">ಜನರು ನೆಮ್ಮದಿಯಿಂದ ಬಿತ್ತನೆ ಮಾಡುವರು. ದ್ರಾಕ್ಷಾಲತೆ ಹಣ್ಣುಬಿಡುವುದು. ಭೂಮಿಯಲ್ಲಿ ಬೆಳೆಯಾಗುವುದು. ಆಕಾಶ ಮಳೆಯನ್ನು ಸುರಿಸುವುದು. ಅಳಿದುಳಿದ ಜನರಿಗೆ ಈ ಸೌಭಾಗ್ಯ ಲಭಿಸುವಂತೆ ಮಾಡುವೆನು.</verse>
				<verse number="13">ಜುದೇಯದ ಕುಲಸ್ಥರೇ, ಇಸ್ರಯೇಲ್ ವಂಶಜರೇ, ರಾಷ್ಟ್ರಗಳಲ್ಲಿ ನಿಮ್ಮ ಹೆಸರು ಶಾಪಕ್ಕೆ ಅಡ್ಡ ಹೆಸರಾಗಿತ್ತು. ಆದರೆ ನಾನು ನಿಮ್ಮನ್ನು ಉದ್ಧರಿಸಿ ನಿಮ್ಮ ಹೆಸರು ಶುಭಸೂಚ್ಯವಾಗುವಂತೆ ಮಾಡುವೆನು. ಹೆದರಬೇಡಿ; ನಿಮ್ಮ ಕೈ ಮುಂದಾಗಲಿ.”</verse>
				<verse number="14">ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನಿಮ್ಮ ಪೂರ್ವಜರ ನಿಮಿತ್ತ ನಾನು ಕೋಪಗೊಂಡಾಗ, ನಿಮಗೆ ಕೇಡುಮಾಡಬೇಕೆಂದು ನಿಷ್ಕರುಣಿಯಾಗಿ ಸಂಕಲ್ಪಿಸಿದೆ.</verse>
				<verse number="15">ಆದರೆ ಈಗ ಜೆರುಸಲೇಮಿನವರಿಗೂ ಜುದೇಯದ ಜನರಿಗೂ ಮೇಲುಮಾಡಬೇಕೆಂದು ಹೊಸ ಸಂಕಲ್ಪ ಮಾಡಿದ್ದೇನೆ. ಆದುದರಿಂದ ಹೆದರಬೇಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.</verse>
				<verse number="16">“ನೀವು ಮಾಡಬೇಕಾದುದು ಏನೆಂದರೆ: ಪ್ರತಿಯೊಬ್ಬನು ತನ್ನ ನೆರೆಯವನೊಡನೆ ಸತ್ಯವನ್ನೇ ಆಡಲಿ. ನ್ಯಾಯಾಲಯಗಳಲ್ಲಿ ನಿಮ್ಮ ತೀರ್ಪು ನ್ಯಾಯಸಮ್ಮತವಾಗಿರಲಿ, ಶಾಂತಿಯ ಸಾಧನ ಆಗಿರಲಿ.</verse>
				<verse number="17">ನಿಮ್ಮಲ್ಲಿ ಯಾರೂ ನೆರೆಯವನಿಗೆ ಕೇಡು ಬಗೆಯದಿರಲಿ. ಸುಳ್ಳುಸಾಕ್ಷ್ಯಕ್ಕೆ ಎಂದೂ ಸಂತೋಷಿಸಬೇಡಿ. ಇದೆಲ್ಲ ನನಗೆ ಅಸಹ್ಯ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.</verse>
				<verse number="18">ಸೇನಾಧೀಶ್ವರ ಸರ್ವೇಶ್ವರ ನನಗೆ ಕೊಟ್ಟ ಸಂದೇಶವೇನೆಂದರೆ:</verse>
				<verse number="19">“ನಾಲ್ಕನೇ, ಐದನೇ, ಏಳನೇ ಮತ್ತು ಹತ್ತನೇ ತಿಂಗಳುಗಳ ಉಪವಾಸ ಇವು ಯೆಹೂದ್ಯ ವಂಶಕ್ಕೆ ವಿಶೇಷ ಹಬ್ಬದ ದಿನಗಳಾಗಿ ಮಾರ್ಪಟ್ಟು, ಜನರು ಹರ್ಷಿಸಿ ಆನಂದಿಸುವರು. ಇಂತಿರಲು ಸತ್ಯವನ್ನೂ ಸಮಾಧಾನವನ್ನೂ ಪ್ರೀತಿಸಿರಿ.”</verse>
				<verse number="20">ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇನ್ನು ಮುಂದೆ ಜನಾಂಗಗಳೂ ಹಲವು ನಗರ ನಿವಾಸಿಗಳೂ ಜೆರುಸಲೇಮಿಗೆ ಬರುವರು.</verse>
				<verse number="21">‘ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ಆರಾಧಿಸಲು, ಅವರ ಆಶೀರ್ವಾದವನ್ನು ಬೇಡಲು ದೇವಾಲಯಕ್ಕೆ ಹೋಗುತ್ತಿದ್ದೇವೆ. ನಮ್ಮೊಡನೆ ಬನ್ನಿ, ಹೋಗೋಣ’ ಎಂದು ಒಂದು ಊರಿನವರು ಮತ್ತೊಂದೂರಿನವರಿಗೆ ಹೇಳುವರು.</verse>
				<verse number="22">“ನಾನಾದೇಶಗಳಿಂದ, ಪ್ರಬಲ ರಾಷ್ಟ್ರಗಳಿಂದ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ಆರಾಧಿಸಿ, ಅವರ ಆಶೀರ್ವಾದವನ್ನು ಕೋರಲು ಜನರು ಜೆರುಸಲೇಮಿಗೆ ಬರುವರು.</verse>
				<verse number="23">ಆ ದಿನದಲ್ಲಿ ವಿವಿಧ ಭಾಷೆಗಳನ್ನಾಡುವ ರಾಷ್ಟ್ರಗಳಿಂದ ಹತ್ತು ಹತ್ತು ಮಂದಿ ಬಂದು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವೂ ನಿಮ್ಮೊಂದಿಗೆ ಬರುತ್ತೇವೆ. ಏಕೆಂದರೆ ದೇವರು ನಿಮ್ಮೊಡನೆ ಇದ್ದಾರೆ ಎಂಬ ಸುದ್ದಿಯನ್ನು ಕೇಳಿದ್ದೇವೆ’ ಎಂದು ಹೇಳುವರು. ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.”</verse>
			</chapter>
			<chapter number="9">
				<verse number="1">ಹದ್ರಾಕ್ ನಾಡಿಗೂ ದಮಸ್ಕಪಟ್ಟಣಕ್ಕೂ ವಿರುದ್ಧ ಸರ್ವೇಶ್ವರ ನುಡಿದ ದೈವೋಕ್ತಿ: ಸರ್ವೇಶ್ವರಸ್ವಾಮಿ ನರಮಾನವರ ಮೇಲೆ ಕಣ್ಣಿಟ್ಟಿದ್ದಾರೆ. ಹೌದು ಇಸ್ರಯೇಲಿನ ಸಕಲ ಕುಲಗಳ ಮೇಲೆ ಕಣ್ಣಿಟ್ಟಿದ್ದಾರೆ.</verse>
				<verse number="2">ಅಂತೆಯೇ ದಮಸ್ಕದ ಪಕ್ಕದಲ್ಲಿರುವ ಹಮಾತಿನ ಮೇಲೆ, ತಾವೇ ಜಾಣರೆಂದು ಕೊಚ್ಚಿಕೊಳ್ಳುತ್ತಿರುವ ಟೈರ್ ಮತ್ತು ಸಿದೋನ್ ಪಟ್ಟಣಗಳ ಮೇಲೆ ಅವರು ಕಣ್ಣಿಟ್ಟಿದ್ದಾರೆ.</verse>
				<verse number="3">ಟೈರ್ ಪಟ್ಟಣವು ತನ್ನ ಸುತ್ತಲೂ ಗೋಡೆಯನ್ನು ಕಟ್ಟಿಕೊಂಡಿದೆ. ಬೆಳ್ಳಿಯನ್ನು ಮಣ್ಣುಮಸಿಯಂತೆ, ಬಂಗಾರವನ್ನು ಕಡ್ಡಿಕಸದಂತೆ ರಾಶಿಮಾಡಿಟ್ಟುಕೊಂಡಿದೆ.</verse>
				<verse number="4">ಆದರೆ ಸರ್ವೇಶ್ವರ ಅದರ ಆಸ್ತಿಪಾಸ್ತಿಯನ್ನು ಕಿತ್ತುಕೊಂಡು ಅದೆಲ್ಲವನ್ನು ಸಮುದ್ರದಲ್ಲಿ ಎಸೆದುಬಿಡುವರು. ಆ ಪಟ್ಟಣವು ಬೆಂಕಿಗೆ ಆಹುತಿಯಾಗುವುದು.</verse>
				<verse number="5">ಇದನ್ನು ಕಂಡು ಅಷ್ಕೆಲೋನ್ ಭಯದಿಂದ ನಡುಗುವುದು. ಗಾಜಾ ಪಟ್ಟಣ ಸಂಕಟದಿಂದ ಗೋಳಾಡುವುದು; ಎಕ್ರೋನ್ ನಿರಾಶೆಯಿಂದ ಪ್ರಲಾಪಿಸುವುದು; ಗಾಜಾ ಪಟ್ಟಣಕ್ಕೆ ರಾಜನೇ ಇಲ್ಲದಂತಾಗುವುದು. ಅಷ್ಕೆಲೋನ್ ನಿರ್ಜನ ಪ್ರದೇಶವಾಗುವುದು;</verse>
				<verse number="6">ಅಷ್ಡೋದಿನಲ್ಲಿ ಮಿಶ್ರಜಾತಿಯವರು ವಾಸಮಾಡುವರು. ಸರ್ವೇಶ್ವರ ಇಂತೆನ್ನುತ್ತಾರೆ: “ಫಿಲಿಷ್ಟಿಯದ ಗರ್ವವನ್ನು ಅಡಗಿಸುವೆನು. ಅವರು ಸವಿಯುವ ರಕ್ತಸಿಕ್ತ ಮಾಂಸವನ್ನು ಅವರ ಬಾಯಿಂದ ಕಕ್ಕಿಸುವೆನು.</verse>
				<verse number="7">ಅವರು ಕಚ್ಚುವ ನಿಷಿದ್ಧ ಪದಾರ್ಥಗಳನ್ನು ಅವರ ಹಲ್ಲುಗಳಿಂದ ಕಿತ್ತುಹಾಕುವೆನು. ಅವರು ಸಹ ಇಸ್ರಯೇಲಿನ ದೇವರಿಗೆ ಮೀಸಲಾದ ಜನರಾಗುವರು; ಯೆಹೂದ್ಯ ಕುಲಗಳಲ್ಲಿ ಒಂದಾಗುವರು. ಎಕ್ರೋಮಿನವರು ಯೆಬೂಸಿಯರಂತೆ ಆಗುವರು.</verse>
				<verse number="8">ಶತ್ರುಗಳು ಅತ್ತ ಕಾಲಿಡದಂತೆ ನನ್ನ ಆಲಯದ ಸುತ್ತಲು ಪಾಳೆಯಹಾಕಿ ಕಾವಲಿರುವೆನು. ಯಾವ ಬಾಧಕನೂ ನನ್ನ ಜನರ ಮೇಲೆ ಧಾಳಿಮಾಡದಂತೆ ನಾನೇ ಕಣ್ಣಿಟ್ಟು ನೋಡಿಕೊಳ್ಳುವೆನು.”</verse>
				<verse number="9">ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.</verse>
				<verse number="10">ಕಿತ್ತುಹಾಕುವೆನು ಎಫ್ರಯಿಮಿನ ರಥಬಲವನು ನಿಶ್ಶೇಷಮಾಡುವೆನು ಜೆರುಸಲೇಮಿನ ಅಶ್ವಬಲವನು ಮುರಿಯಲಾಗುವುದು ಯುದ್ಧದ ಬಿಲ್ಲುಗಳನು. ಘೋಷಿಸುವೆನು ಶಾಂತಿಯನು ರಾಷ್ಟ್ರಗಳಿಗೆ ಆತನ ರಾಜ್ಯಭಾರ ಸಮುದ್ರದಿಂದ ಸಮುದ್ರದವರೆಗೆ ಯೂಫ್ರೆಟಿಸ್ ನದಿಯಿಂದ ಭುವಿಯ ಕಟ್ಟಕಡೆಯವರೆಗೆ.</verse>
				<verse number="11">ರಕ್ತ ಸುರಿಸಿ ನೀವು ನನ್ನೊಡನೆ ಮಾಡಿಕೊಂಡ ಒಡಂಬಡಿಕೆಯ ನಿಮಿತ್ತ ಕರೆತರುವೆನು ನಿಮ್ಮವರನು ಸೆರೆಯಾಳತ್ವದಿಂದ ಮೇಲೆತ್ತುವೆನು ನಿಮ್ಮವರನು ಆ ಸೆರೆಬಾವಿಯಿಂದ.</verse>
				<verse number="12">ನಂಬಿಕೆಯಿಂದ ಕಾದಿರುವ ಸೆರೆಯಾಳುಗಳೇ, ಹಿಂದಿರುಗಿರಿ ನಿಮ್ಮ ಸುಭದ್ರ ದುರ್ಗಸ್ಥಾನಕೆ ಇಗೋ, ಈಗಲೂ ಘೋಷಿಸುತ್ತಿರುವೆ: ನಿಮಗಿಮ್ಮಡಿ ಸೌಭಾಗ್ಯ ನೀಡುವೆ.</verse>
				<verse number="13">ಬಗ್ಗಿಸಿಕೊಂಡಿರುವೆ ಜುದೇಯ ಎಂಬ ಬಿಲ್ಲನು ಹೂಡಿರುವೆ ಅದರಲಿ ಎಫ್ರಯಿಮೆಂಬ ಬಾಣವನು. ಸಿಯೋನ್, ಎತ್ತಿಕಟ್ಟಿರುವೆ ನಿನ್ನವರನು ಗ್ರೀಕರಿಗಿದಿರಾಗಿ ಮಾಡುವೆ ನಿನ್ನನು ಶೂರನ ಕತ್ತಿಯನ್ನಾಗಿ.</verse>
				<verse number="14">ಸ್ವಜನರಿಗೆ ಸರ್ವೇಶ್ವರ ಪ್ರತ್ಯಕ್ಷನಾಗುವನು ಮಿಂಚಿನಂತೆ ಬಿಡುವನು ತನ್ನ ಬಾಣಗಳನು ಮೊಳಗಿಸುವನು ಕಾಳಗದ ತುತೂರಿಯನು ದಕ್ಷಿಣದ ಬಿರುಗಾಳಿಯೊಂದಿಗೆ ಮುನ್ನುಗ್ಗುವನು.</verse>
				<verse number="15">ರಕ್ಷಿಸುವನು ಸೇನಾಧೀಶ್ವರ ಸರ್ವೇಶ್ವರ ತನ್ನ ಜನರನು ನಸುಕಿ ನಾಶಮಾಡುವರವರು ಕವಣೆಗಾರ ಶತ್ರುಗಳನು. ಭೋರ್ಗರೆಯುವರು ಕುಡಿದು ಅಮಲೇರಿದವರಂತೆ ಇರುವರು ತುಂಬಿ ತುಳುಕುವ ಬೋಗುಣಿಗಳಂತೆ ರಕ್ತತೋಯ್ದ ವೇದಿಯ ಮೂಲೆಮೂಲೆಗಳಂತೆ.</verse>
				<verse number="16">ಸ್ವಜನರನು ದೇವ ಸರ್ವೇಶ್ವರ ಕಾಪಾಡುವನು ಮೇಷಪಾಲನಂತೆ ನಾಡಿನೊಳು ಥಳಥಳಿಸುವರವರು ಕಿರೀಟದ ರತ್ನಗಳಂತೆ.</verse>
				<verse number="17">ಆಹಾ! ಎಷ್ಟು ಸುಂದರ, ಎಷ್ಟು ಮನೋಹರ ಆ ನಾಡಿನ ದೃಶ್ಯ! ಪುಷ್ಟಿಗೊಳಿಸುವುವು ಯುವಕಯುವತಿಯರನು ದ್ರಾಕ್ಷೆ, ದವಸಧಾನ್ಯ!</verse>
			</chapter>
			<chapter number="10">
				<verse number="1">ವಸಂತಕಾಲದಲ್ಲಿ ಮಳೆಗಾಗಿ ಸರ್ವೇಶ್ವರಸ್ವಾಮಿಗೆ ಪ್ರಾರ್ಥನೆ ಮಾಡಿರಿ. ಮೋಡ ಮಿಂಚುಗಳನ್ನು ಗಾಳಿಮಳೆಯನ್ನು ಉಂಟುಮಾಡುವವರು ಅವರೇ. ಸರ್ವರಿಗೂ ಹೊಲಗದ್ದೆಗಳಲ್ಲಿ ಪೈರುಪಚ್ಚೆಗಳನ್ನು ನೀಡುವವರು ಅವರೇ.</verse>
				<verse number="2">ಗೃಹದೇವತೆಗಳು ನುಡಿಯುವುದು ಜೊಳ್ಳು; ಶಕುನ ಹೇಳುವವರ ಮಾತು ಸುಳ್ಳು. ಸ್ವಪ್ನಕಾರರ ಕನಸುಗಳು ಕಲ್ಪಿತ, ಅವರು ಹೇಳುವ ಸಮಾಧಾನ ವ್ಯರ್ಥ, ಈ ಕಾರಣ ಜನರು ಕುರಿಗಳಂತೆ ಚದರಿದ್ದಾರೆ; ಕುರುಬನಿಲ್ಲದೆ ಕಂಗೆಟ್ಟಿದ್ದಾರೆ.</verse>
				<verse number="3">ಸರ್ವೇಶ್ವರ ಹೀಗೆನ್ನುತ್ತಾರೆ: “ಎಂತಲೇ ಕುರಿಗಾಹಿಗಳ ಮೇಲೆ ನನ್ನ ಕೋಪ ಭುಗಿಲೆದ್ದಿದೆ. ಆ ಮುಂದಾಳುಗಳ ಮೇಲೆ ನನ್ನ ದಂಡನೆ ಎರಗಲಿದೆ. ಸೇನಾಧೀಶ್ವರ ಸರ್ವೇಶ್ವರನಾದ ನಾನು ಜುದೇಯ ಕುಲವನ್ನು ನನ್ನ ಮಂದೆಯಂತೆ ಪರಿಪಾಲಿಸುವೆನು. ಅದನ್ನು ವೀರ ಯುದ್ಧಾಶ್ವವನ್ನಾಗಿ ಮಾಡಿಕೊಳ್ಳುವೆನು.</verse>
				<verse number="4">ಆ ಕುಲದಿಂದಲೇ ಮೂಲೆಗಲ್ಲು, ಗುಡಾರದ ಗೂಟ, ಯುದ್ಧದ ಬಿಲ್ಲುಗಳು ಬರುವುವು. ಆ ಕುಲದಿಂದಲೇ ಸಕಲ ಅಧಿಕಾರಿಗಳು ಹೊರಬರುವರು.</verse>
				<verse number="5">ಇವರೆಲ್ಲರು ರಣವೀರರಂತೆ ಶತ್ರುಗಳನ್ನು ಬೀದಿಕೆಸರಿನಲ್ಲಿ ತುಳಿದುಬಿಡುವರು. ಸರ್ವೇಶ್ವರ ತಮ್ಮ ಸಂಗಡ ಇದ್ದಾರೆಂದು ಧೈರ್ಯದಿಂದ ಯುದ್ಧಮಾಡುವರು, ಎದುರಿಸುವ ಕುದುರೆ ಸವಾರರನ್ನು ಭ್ರಾಂತಿಗೊಳಿಸುವರು.”</verse>
				<verse number="6">“ಬಲಗೊಳಿಸುವೆನು ಯೆಹೂದ್ಯ ಕುಲವನು ಉದ್ಧರಿಸುವೆನು ಜೊಸೇಫನ ವಂಶವನು. ಕನಿಕರಿಸುವೆನು, ಮರಳಿ ಬರಮಾಡುವೆನು ಅವರನು ನಾನು ಕೈಬಿಟ್ಟವರಂತೆ ಇರಲಾರರವರು ಇನ್ನು. ಏಕೆನೆ ನಾನೇ ದೇವ ಸರ್ವೇಶ್ವರ ಅವರಿಗೆ ಕಿವಿಗೊಡುವೆನು ನಾನು ಅವರ ಕರೆಗೆ ಸದುತ್ತರವೀಯುವೆನು ಅವರ ಮೊರೆಗೆ.</verse>
				<verse number="7">ಬಲಾಢ್ಯ ವೀರರಾಗುವರು ಎಫ್ರಯಿಮ್ ಕುಲದವರು ದ್ರಾಕ್ಷಾರಸ ಕುಡಿದವರಂತೆ ಮನದಲ್ಲಿ ಸುಖಿಸುವರು. ಇದಕಂಡು ಸಂತೋಷಿಸುವರು ಅವರ ಕುವರಕುವರಿಯರು ಸರ್ವೇಶ್ವರಸ್ವಾಮಿಯಲಿ ಹೃತ್ಪೂರ್ವಕವಾಗಿ ಆನಂದಗೊಳ್ಳುವರು.</verse>
				<verse number="8">“ಸಭೆ ಸೇರಿಸುವೆನವರನು ನಿಸ್ಸಂದೇಹವಾಗಿ ವಿಮುಕ್ತಗೊಳಿಸುವೆನವರನು ಕರೆದು ಸನ್ನೆಮಾಡಿ ಹಿಂದಿನಂತೆ ಮುಂದೆಯೂ ಬೆಳೆವರವರು ಸಮೃದ್ಧಿಯಾಗಿ.</verse>
				<verse number="9">ಚದರಿದೆನಾದರೂ ಅವರನು ಅನ್ಯರಾಷ್ಟ್ರಗಳಲಿ ಸ್ಮರಿಸಿಕೊಳ್ಳುವರವರು ನನ್ನನು ದೂರದೇಶಗಳಲಿ ಹಿಂದಿರುಗುವರು ಸಂತಾನ ಸಮೇತ ಬದುಕಿಬಾಳಿ.</verse>
				<verse number="10">ಕರೆತರುವೆನವರನು ಈಜಿಪ್ಟ್, ಅಸ್ಸೀರಿಯ ನಾಡುಗಳಿಂದ ಗಿಲ್ಯಾದ್, ಲೆಬೊನೇನ್‍ಗಳಲ್ಲವರು ಬಂದು ಸೇರುವುದರಿಂದ ತುಂಬಿತುಳುಕುವುವು ಆ ನಾಡುಗಳು ಜನಸ್ತೋಮದಿಂದ.</verse>
				<verse number="11">ದಾಟಿಬರುವರವರು ಕಷ್ಟವೆಂಬ ಕಡಲನು ಛೇದಿಸಿಬಿಡುವೆನು ಅಲ್ಲಕಲ್ಲೋಲ ಸಮುದ್ರವನು. ತಳದ ತನಕ ಒಣಗಿಹೋಗುವುದು ನೈಲ್ ನದಿಯು ಕುಗ್ಗಿಹೋಗುವುದು ಅಸ್ಸೀರಿಯಾದ ಗರ್ವವು ತಪ್ಪಿಹೋಗುವುದು ಈಜಿಪ್ಟಿನ ರಾಜದರ್ಪವು.</verse>
				<verse number="12">ಬಲಿಷ್ಠರಾಗುವರಾ ಜನರು ಸರ್ವೇಶ್ವರನಲಿ ಹೆಚ್ಚಳಪಡುವರು ಆತನ ನಾಮದಲಿ,” ನುಡಿದಿಹನು ಸರ್ವೇಶ್ವರ ಈ ರೀತಿಯಲಿ.</verse>
			</chapter>
			<chapter number="11">
				<verse number="1">ತೆರೆ, ಲೆಬನೋನೇ ನಿನ್ನ ಪುರದ್ವಾರಗಳನು ದಹಿಸಿಬಿಡಲಿ ಅಗ್ನಿ ನಿನ್ನ ದೇವದಾರುಗಳನು!</verse>
				<verse number="2">ತುರಾಯಿಮರವೇ, ಗೋಳಾಡು ಬಿದ್ದುಹೋಗಿದೆ ದೇವದಾರು ನಾಶವಾಗಿವೆ ಭಾರೀ ಮರಗಳು. ರೋಧಿಸಲಿ ಬಾಷಾನಿನ ಅಲ್ಲೋನ್ ವೃಕ್ಷಗಳು ಉರುಳಿವೆ ನುಗ್ಗಲಾಗದಾ ದಟ್ಟವನಗಳು.</verse>
				<verse number="3">ಆಹಾ! ಕೇಳಿಬರುತ್ತಿದೆ ಕುರುಬರ ಗೋಳಾಟ ಬರಡಾಗಿದೆ ಅವರ ಹುಲ್ಲುಗಾವಲ ನೋಟ ಕೇಳಿರಿ, ಇಗೋ, ಯುವಸಿಂಹಗಳ ಆಕ್ರಂದನ ಏಕೆನೆ ಪಾಳುಬಿದ್ದಿದೆ ಜೋರ್ಡನಿನ ದಟ್ಟವನ!</verse>
				<verse number="4">ದೇವರಾದ ಸರ್ವೇಶ್ವರ ನನಗೆ ಇಂತೆಂದರು: “ಕೊಯ್ಗುರಿಗಳ ಮಂದೆಯನು ಕಾಯಿ.</verse>
				<verse number="5">ಕೊಂಡುಕೊಳ್ಳುವವರು, ಅವುಗಳನ್ನು ಕೊಯ್ದರೂ ನಿರಪರಾಧಿಗಳೆನಿಸಿಕೊಳ್ಳುವರು. ಅವುಗಳನ್ನು ಮಾರುವವರು ‘ಸರ್ವೇಶ್ವರಸ್ವಾಮಿಗೆ ಸ್ತೋತ್ರ, ನಾವು ಧನವಂತರಾದೆವು’ ಎಂದುಕೊಳ್ಳುವರು. ಆ ಮಂದೆಯ ಕುರುಬರು ಸಹ ಅವುಗಳಿಗೆ ಕರುಣೆತೋರಿಸರು.”</verse>
				<verse number="6">ಸರ್ವೇಶ್ವರಸ್ವಾಮಿಯ ನುಡಿಯಿದು: “ಈ ಲೋಕನಿವಾಸಿಗಳಿಗೆ ನಾನು ಕರುಣೆತೋರಿಸೆನು. ಪ್ರತಿಯೊಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ಅರಸನ ಕೈಗೂ ಒಪ್ಪಿಸಿಬಿಡುವೆನು. ಆ ಬಲಿಷ್ಠರು ಲೋಕವನ್ನು ಧ್ವಂಸಮಾಡುವರು. ಅವರ ಕೈಗೆ ಸಿಕ್ಕದವರನ್ನು ನಾನು ರಕ್ಷಿಸೆನು.”</verse>
				<verse number="7">ಆಗ ನಾನು ಕೊಯ್ಗುರಿಗಳನ್ನು ವ್ಯಾಪಾರ ಮಾಡುವವರಿಗೋಸ್ಕರ ಆ ಮಂದೆಗೆ ಕುರಿಗಾಹಿ ಆದೆ. ಎರಡು ಕುರಿಗೋಲುಗಳನ್ನು ಕೈಗೆ ತೆಗೆದುಕೊಂಡು ಒಂದಕ್ಕೆ ‘ಕೃಪೆ’ ಎಂದೂ ಮತ್ತೊಂದಕ್ಕೆ ‘ಐಕ್ಯ’ ಎಂದೂ ಹೆಸರಿಟ್ಟು ಆ ಮಂದೆಯನ್ನು ಮೇಯಿಸಿದೆ.</verse>
				<verse number="8">ಒಂದೇ ತಿಂಗಳೊಳಗೆ ಮೂವರು ಕುರುಬರನ್ನು ಕೆಲಸದಿಂದ ತೆಗೆದುಹಾಕಿದೆ. ಅನಂತರ ನನಗೆ ಕುರಿಗಳ ಬಗ್ಗೆ ಅಸಹ್ಯವಾಯಿತು. ಕುರಿಗಳು ಸಹ ನನ್ನ ಬಗ್ಗೆ ಬೇಸರಗೊಂಡವು.</verse>
				<verse number="9">ಆಗ ನಾನು: “ಇನ್ನು ಮೇಲೆ ನಾನು ನಿಮ್ಮನ್ನು ಮೇಯಿಸೆನು. ಸಾಯಬೇಕಾದವು ಸಾಯಲಿ, ಹಾಳಾಗಬೇಕಾದವು ಹಾಳಾಗಿಹೋಗಲಿ, ಉಳಿದವುಗಳು ಒಂದನ್ನೊಂದು ಕಚ್ಚಿ ಕಬಳಿಸಿಬಿಡಲಿ,” ಎಂದೆ.</verse>
				<verse number="10">ಬಳಿಕ ಎಲ್ಲ ರಾಷ್ಟ್ರಗಳೊಂದಿಗೆ ನಾನು ಮಾಡಿಕೊಂಡಿದ್ದ ಒಡಂಬಡಿಕೆಯನ್ನು ರದ್ದುಗೊಳಿಸಬೇಕೆಂದು ‘ಕೃಪೆ’ ಎಂಬ ಕೋಲನ್ನು ಮುರಿದುಬಿಟ್ಟೆ.</verse>
				<verse number="11">ಅಂದೇ ಆ ಒಡಂಬಡಿಕೆ ರದ್ದಾಯಿತು. ಇದನ್ನು ವೀಕ್ಷಿಸುತ್ತಿದ್ದ ಕೊಯ್ಗುರಿಗಳ ವ್ಯಾಪಾರಿಗಳು, ನಾನು ಈಡೇರಿಸಿದ್ದು ದೇವರ ನುಡಿಯನ್ನೇ ಎಂಬುದಾಗಿ ಗ್ರಹಿಸಿಕೊಂಡರು.</verse>
				<verse number="12">ಅನಂತರ ನಾನು ಅವರಿಗೆ, “ನಿಮಗೆ ಸರಿದೋರಿದರೆ ನನಗೆ ಸಂಬಳವನ್ನು ಕೊಡಿ; ಇಲ್ಲವಾದರೆ ಬಿಡಿ,” ಎಂದೆ. ಅವರು ಇವನ ಯೋಗ್ಯತೆ ಇಷ್ಟೇ ಎಂದುಕೊಂಡು ಮೂವತ್ತು ಬೆಳ್ಳಿನಾಣ್ಯವನ್ನು ನನಗೆ ಸಂಬಳಕ್ಕಾಗಿ ಕೊಟ್ಟರು.</verse>
				<verse number="13">ಇದನ್ನು ನೋಡಿದ ಸರ್ವೇಶ್ವರ ನನಗೆ: “ಇದನ್ನು ಕಾಣಿಕೆ ಕೋಶದಲ್ಲಿ ಬಿಸಾಡು. ಇದು ತಾನೋ ಅವರು ನನಗೆ ಕೊಡುವಂಥ ಘನವಾದ ಸಂಬಳ!” ಎಂದರು. ಅಂತೆಯೇ ನಾನು ಆ ಮೂವತ್ತು ಬೆಳ್ಳಿನಾಣ್ಯಗಳನ್ನು ತೆಗೆದುಕೊಂಡು ಸರ್ವೇಶ್ವರನ ಆಲಯದ ಕಾಣಿಕೆ ಕೋಶದಲ್ಲಿ ಬಿಸಾಡಿಬಿಟ್ಟೆ.</verse>
				<verse number="14">ಕೂಡಲೆ ಜುದೇಯ ಮತ್ತು ಇಸ್ರಯೇಲ್ ನಡುವೆ ಇದ್ದ ಸೋದರ ಸಂಬಂಧವನ್ನು ಮುರಿಯಬೇಕೆಂದು ‘ಐಕ್ಯ’ವೆಂಬ ನನ್ನ ಎರಡನೇ ಕೋಲನ್ನು ಮುರಿದುಬಿಟ್ಟೆ.</verse>
				<verse number="15">ಅನಂತರ ಸರ್ವೇಶ್ವರ ನನಗೆ ಹೀಗೆಂದು ಅಪ್ಪಣೆಮಾಡಿದರು: “ಮತ್ತೊಮ್ಮೆ ನೀನು ವೇಷ ಧರಿಸಿಕೊಂಡು ಮಂಕು ಕುರುಬನಂತೆ ನಟಿಸು.</verse>
				<verse number="16">ಏಕೆಂದರೆ ನಾಡಿನಲ್ಲಿ ಒಬ್ಬ ಕುರುಬನು ಏಳುವಂತೆ ನಾನು ಮಾಡುವೆನು. ಅವನು ಅಳಿದುಹೋದ ಕುರಿಗಳನ್ನು ಗುಣಪಡಿಸನು; ಚದರಿಹೋದ ಕುರಿಗಳನ್ನು ಹುಡುಕಿತರನು; ಉಳಿದವುಗಳನ್ನು ಸಾಕಲಾರನು. ಕೊಬ್ಬಿದ ಕುರಿಗಳನ್ನು ಕಡಿದು, ಅವುಗಳ ಗೊರಸುಗಳನ್ನೂ ಸುಲಿದು ಕಬಳಿಸುವನು.</verse>
				<verse number="17">ಮಂದೆಕಾಯದ ಕುರುಬನಿಗೆ ಧಿಕ್ಕಾರ! ತಾಕುವುದು ಅವನ ತೋಳಿಗೂ ಬಲಗಣ್ಣಿಗೂ ಖಡ್ಗ ತೀರಾ ಬತ್ತಿಹೋಗಲಿ ಅವನ ತೋಳು ಪೂರಾ ಮಬ್ಬಾಗಲಿ ಅವನ ಬಲಗಣ್ಣು.</verse>
			</chapter>
			<chapter number="12">
				<verse number="1">ಇಸ್ರಯೇಲಿನ ವಿಷಯವಾಗಿ ಸರ್ವೇಶ್ವರಸ್ವಾಮಿ ನುಡಿದ ದೈವೋಕ್ತಿ: ಆಕಾಶಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿಭಾರವನ್ನು ಹಾಕಿ, ಮಾನವನ ಜೀವಾತ್ಮವನ್ನು ಸೃಷ್ಟಿಸುವ ಸರ್ವೇಶ್ವರ ಇಂತೆನ್ನುತ್ತಾರೆ:</verse>
				<verse number="2">“ನಾನು ಜೆರುಸಲೇಮನ್ನು ಮದ್ಯದ ಬುಡ್ಡಿಯನ್ನಾಗಿ ಮಾಡುವೆನು. ಅದರ ಸುತ್ತಮುತ್ತಲಿರುವ ರಾಷ್ಟ್ರಗಳು ಆ ಬುಡ್ಡಿಯಿಂದ ಕುಡಿದು ಮತ್ತರಾಗಿ, ಅತ್ತಿತ್ತ ಓಲಾಡುವರು. ಜೆರುಸಲೇಮಿಗೆ ಅವರು ಮುತ್ತಿಗೆ ಹಾಕುವಾಗ ಜುದೇಯವೆಲ್ಲವೂ ಇಕ್ಕಟ್ಟಿಗೆ ಒಳಗಾಗುವುದು.</verse>
				<verse number="3">ಆ ದಿನದಂದು ಜೆರುಸಲೇಮನ್ನು ಭಾರಿ ಬಂಡೆಯನ್ನಾಗಿ ಮಾಡುವೆನು. ಅದನ್ನು ಎತ್ತಲು ಯತ್ನಿಸುವವರೆಲ್ಲರಿಗೂ ತೀವ್ರ ಗಾಯವಾಗುವುದು. ವಿಶ್ವದ ರಾಷ್ಟ್ರಗಳು ಅದನ್ನು ಎತ್ತಿಹಾಕಲು ಕೂಡಿಬರುವುವು.</verse>
				<verse number="4">ಆಗ ಅವರ ಕುದುರೆಗಳೆಲ್ಲ ತಬ್ಬಿಬ್ಬಾಗುವಂತೆ ಮಾಡುವೆನು. ರಾಹುತರನ್ನು ದಿಗ್ಭ್ರಮೆಗೊಳಿಸುವೆನು. ಜುದೇಯ ಮನೆತನವನ್ನು ಕಟಾಕ್ಷಿಸಿ, ಇತರ ರಾಷ್ಟ್ರಗಳ ಕುದುರೆಗಳನ್ನೆಲ್ಲಾ ಕುರುಡಾಗಿಸುವೆನು.</verse>
				<verse number="5">ಆಗ ಜುದೇಯದ ನಾಯಕರೆಲ್ಲ ತಮ್ಮ ತಮ್ಮೊಳಗೇ: ‘ಜೆರುಸಲೇಮಿನ ನಿವಾಸಿಗಳ ಶಕ್ತಿಸಾಮರ್ಥ್ಯ ಸೇನಾಧೀಶ್ವರ ಸರ್ವೇಶ್ವರನಾದ ದೇವರೇ’ ಎಂದುಕೊಳ್ಳುವರು.</verse>
				<verse number="6">“ಆ ದಿನದಂದು ಜುದೇಯದ ಕುಲನಾಯಕರನ್ನು ಕಟ್ಟಿಗೆಯ ಮಧ್ಯೆ ಇರುವ ಅಗ್ಗಿಷ್ಟಿಕೆಯನ್ನಾಗಿಯೂ ಸಿವುಡುಗಳ ನಡುವೆ ಉರಿಯುವ ಪಂಜನ್ನಾಗಿಯೂ ಮಾಡುವೆನು. ಅವರು ಸುತ್ತಮುತ್ತಲಿನ ರಾಷ್ಟ್ರಗಳನ್ನು ಎಡಬಲವೆನ್ನದೆ ನಾಶಮಾಡುವರು. ಜೆರುಸಲೇಮಿನ ನಿವಾಸಿಗಳಾದರೋ ತಮ್ಮ ನಗರದಲ್ಲೇ ಸುರಕ್ಷಿತವಾಗಿರುವರು.</verse>
				<verse number="7">“ಸರ್ವೇಶ್ವರನಾದ ನಾನು ಜುದೇಯದ ಸೈನ್ಯಗಳು ಮೊದಲು ಜಯಗಳಿಸುವಂತೆ ಮಾಡುವೆನು. ಆಗ ದಾವೀದ ವಂಶದವರ ಹಾಗೂ ಜೆರುಸಲೇಮಿನವರ ಘನತೆ ಗೌರವ ಜುದೇಯದವರ ಘನತೆ ಗೌರವವನ್ನು ಮೀರದು.</verse>
				<verse number="8">ಅಂದು, ಸರ್ವೇಶ್ವರ ಜೆರುಸಲೇಮಿನ ನಿವಾಸಿಗಳನ್ನು ಕೋಟೆಯಂತೆ ಕಾಪಾಡುವರು. ಈ ಕಾರಣ, ಅವರಲ್ಲಿ ದುರ್ಬಲನು ದಾವೀದನಂತೆ ಬಲಾಢ್ಯನಾಗುವನು. ದಾವೀದನವಂಶ ದೇವದೂತರಂತೆ, ಹೌದು, ದೇವರಂತೆ, ಅವರಿಗೆ ಮುಂದಾಳಾಗುವುದು.</verse>
				<verse number="9">ಆ ದಿನದಂದು ಜೆರುಸಲೇಮಿನ ಮೇಲೆ ಬೀಳುವ ರಾಷ್ಟ್ರಗಳೆಲ್ಲವನ್ನು ನಾನೇ ಧ್ವಂಸಮಾಡುವೆನು.</verse>
				<verse number="10">“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.</verse>
				<verse number="11">ಮೆಗಿದ್ದೋವಿನ ಕಣಿವೆಯಲ್ಲಿ ಆದಂತೆ, ಹದಾಧ್ - ರೀಮೋನ್‍ನಲ್ಲಿ ನಡೆದಂತೆ ಜೆರುಸಲೇಮಿನಲ್ಲಿ ಆ ದಿನದಂದು ದೊಡ್ಡ ಗೋಳಾಟವಾಗುವುದು.</verse>
				<verse number="12">ನಾಡೆಲ್ಲ ಗೋಳಾಡುವುದು, ಒಂದೊಂದು ಕುಟುಂಬವೂ ಪ್ರತ್ಯೇಕವಾಗಿ ಗೋಳಾಡುವುದು. “ದಾವೀದ ವಂಶದ ಕುಟುಂಬವೇ ಬೇರೆಯಾಗಿ, ಅದರಲ್ಲಿನ ಗಂಡಸರು ಹೆಂಗಸರು ಬೇರೆಬೇರೆಯಾಗಿ; ನಾತಾನ ವಂಶದ ಕುಟುಂಬವೇ ಬೇರೆಯಾಗಿ, ಅದರಲ್ಲಿನ ಗಂಡಸರು ಹೆಂಗಸರು ಬೇರೆಬೇರೆಯಾಗಿ;</verse>
				<verse number="13">ಲೇವಿ ವಂಶದ ಕುಟುಂಬವೇ ಬೇರೆಯಾಗಿ, ಅದರಲ್ಲಿನ ಗಂಡಸರು ಹೆಂಗಸರು ಬೇರೆಬೇರೆಯಾಗಿ; ಶಿಮ್ಮಿಯ ಸಂತಾನದ ಕುಟುಂಬವೇ ಬೇರೆಯಾಗಿ, ಅದರಲ್ಲಿನ ಗಂಡಸರು ಹೆಂಗಸರು ಬೇರೆಬೇರೆಯಾಗಿ;</verse>
				<verse number="14">ಮಿಕ್ಕ ಕುಟುಂಬಗಳೆಲ್ಲ ಬೇರೆಯಾಗಿ, ಅವುಗಳ ಗಂಡಸರು ಹೆಂಗಸರು ಬೇರೆಬೇರೆಯಾಗಿ; ಹೀಗೆ ಎಲ್ಲರು ಗೋಳಾಡುವರು ಬೇರೆಬೇರೆಯಾಗಿ.”</verse>
			</chapter>
			<chapter number="13">
				<verse number="1">ಸೇನಾಧೀಶ್ವರ ಸರ್ವೇಶ್ವರ ಹೀಗೆ ಹೇಳುತ್ತಾರೆ: “ಆ ದಿನದಂದು ದಾವೀದ ವಂಶದವರಿಗೆ ಮತ್ತು ಜೆರುಸಲೇಮಿನವರಿಗೆ ಪಾಪದ ಅಶುದ್ಧತೆಯನ್ನು ಪರಿಹರಿಸಬಲ್ಲ ಒಂದು ಬುಗ್ಗೆ ಕಾಣಿಸಿಕೊಳ್ಳುವುದು.</verse>
				<verse number="2">ಅಂದು ನಾಡಿನಲ್ಲಿ ವಿಗ್ರಹಗಳು ಹೆಸರಿಲ್ಲದಂತೆ ಮಾಡುವೆನು; ಅಷ್ಟೇ ಅಲ್ಲ, ಅವುಗಳನ್ನು ಯಾರೂ ನೆನಸಿಕೊಳ್ಳದಂತೆ ಮಾಡುವೆನು; ಅಲ್ಲದೆ ಪ್ರವಾದಿಯೆನಿಸಿಕೊಳ್ಳುವವರನ್ನೂ ಅಶುದ್ಧ ಆತ್ಮವನ್ನೂ ನಾಡಿನಿಂದ ತೊಲಗಿಸಿಬಿಡುವೆನು.</verse>
				<verse number="3">ಯಾವನಾದರೂ ಪ್ರವಾದನೆ ಮಾಡಲು ಯತ್ನಿಸಿದರೆ, ಅವನ ತಾಯಿತಂದೆಗಳೇ, “ಇವನು ಸರ್ವೇಶ್ವರಸ್ವಾಮಿಯ ಹೆಸರೆತ್ತಿ ಸುಳ್ಳಾಡುವುದರಿಂದ ಅವನು ಬದುಕಬಾರದು,” ಎಂದು ಹೇಳುವರು. ಅಷ್ಟೇ ಅಲ್ಲ, ಅವನು ಮಾಡಿದ ಪ್ರವಾದನೆಯ ನಿಮಿತ್ತ ಅವರೇ ಅವನನ್ನು ತಿವಿದು ಕೊಂದುಹಾಕುವರು.</verse>
				<verse number="4">ಆ ದಿನದಲ್ಲಿ ಯಾವ ಪ್ರವಾದಿಯೂ ತನಗಾಗಿರಬಹುದಾದ ದರ್ಶನಗಳನ್ನು ಪ್ರಕಟಿಸಲು ಹೆಮ್ಮೆಪಡುವುದಿಲ್ಲ. ಪ್ರವಾದಿಯಂತೆ ನಟಿಸುವುದಿಲ್ಲ. ಪ್ರವಾದಿಯ ವೇಷವನ್ನು ಧರಿಸುವುದಿಲ್ಲ.</verse>
				<verse number="5">ಬದಲಿಗೆ, ತಾನು ಪ್ರವಾದಿಯಲ್ಲ, ಹೊಲದಲ್ಲಿ ಕೆಲಸಮಾಡುವವನು, ಚಿಕ್ಕಂದಿನಿಂದ ನಾನು ಕೂಲಿಯಾಳು ಎಂದುಕೊಳ್ಳುವನು.</verse>
				<verse number="6">‘ನಿನ್ನ ಮೈಮೇಲಿನ ಗಾಯಗಳು ಹೇಗಾದವು?’ ಎಂದು ಯಾರಾದರೂ ಕೇಳಿದರೆ, ‘ಇವು ಗೆಳೆಯನ ಮನೆಯಲ್ಲಾದ ಗಾಯಗಳು’ ಎಂದು ಉತ್ತರಕೊಡುವನು.”</verse>
				<verse number="7">ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ನನ್ನ ಕುರಿಗಾಹಿಗೆ ವಿರುದ್ಧವಾಗಿ, ನನ್ನಾಸಂಗಡಿಗನಿಗೆದುರಾಗಿ, ಓ ಖಡ್ಗವೇ, ಎಚ್ಚರಗೊಳ್ಳು; ಕೊಲ್ಲು ಕುರಿಗಾಹಿಯನು. ಆಗ ಚದರುವುವು ಕುರಿಗಳು, ಕೈಮಾಡಲಿರುವೆ ಮರಿಗಳ ಮೇಲೂ.</verse>
				<verse number="8">ಹತರಾಗುವರು ನಾಡಿನ ಮೂರರಲ್ಲೆರಡು ಭಾಗದವರು, ಮೂರನೆಯ ಭಾಗದವರು ಉಳಿಯುವರಲ್ಲಿ, ಸರ್ವೇಶ್ವರಸ್ವಾಮಿಯ ನುಡಿಯಿದು.</verse>
				<verse number="9">ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.</verse>
			</chapter>
			<chapter number="14">
				<verse number="1">ಇಗೋ, ಸರ್ವೇಶ್ವರ ನೇಮಿಸಿದ ದಿನ ಬರುತ್ತಿದೆ. ಆಗ ಜೆರುಸಲೇಮಿನ ಆಸ್ತಿಪಾಸ್ತಿ ಸೂರೆಯಾಗುವುದು. ಮತ್ತು ಸೂರೆಯಾದದ್ದೆಲ್ಲ ಅವರ ಕಣ್ಮುಂದೆ ಪಾಲುಪಾಲಾಗುವುದು.</verse>
				<verse number="2">ಜೆರುಸಲೇಮಿಗೆ ಎದುರಾಗಿ ಹೋರಾಡಲು ಅನ್ಯರಾಷ್ಟ್ರಗಳನ್ನು ಒಂದುಗೂಡಿಸುವೆನು. ಅವು ಆ ನಗರವನ್ನು ಆಕ್ರಮಿಸಿ, ಮನೆಗಳನ್ನು ಸೂರೆಮಾಡಿ, ಹೆಂಗಸರ ಮೇಲೆ ಅತ್ಯಾಚಾರವೆಸಗುವರು. ಅರ್ಧಕ್ಕೆ ಅರ್ಧ ಜನ ಸೆರೆಹೋಗುವರು. ಮಿಕ್ಕವರು ಅಲ್ಲೇ ಸುರಕ್ಷಿತವಾಗಿರುವರು.</verse>
				<verse number="3">ಅನಂತರ ಪೂರ್ವಕಾಲದಲ್ಲಿ ನಡೆದಂತೆ, ಸರ್ವೇಶ್ವರ ಹೊರಟುಬಂದು ಆ ರಾಷ್ಟ್ರಗಳಿಗೆ ವಿರುದ್ಧವಾಗಿ ಪ್ರತಿಭಟಿಸುವರು.</verse>
				<verse number="4">ಅವರ ಪಾದಗಳು ಜೆರುಸಲೇಮಿಗೆ ಪೂರ್ವಕ್ಕಿರುವ ಓಲಿವ್ ಗುಡ್ಡದ ಮೇಲೆ ನಿಲ್ಲುವುದು. ಆ ಗುಡ್ಡವು ಇಬ್ಭಾಗವಾಗಿ ಪೂರ್ವಪಶ್ಚಿಮದ ಉದ್ದಕ್ಕೂ ಇನ್ನರ್ಧ ಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.</verse>
				<verse number="5">ನೀವು ಆ ಗುಡ್ಡಗಳ ನಡುವೆ ಉಂಟಾಗುವ ಕಣಿವೆಯ ಮೂಲಕ ಪಲಾಯನಗೈಯುವಿರಿ. ಆ ಕಣಿವೆ ಆಚೆಲಿನವರೆಗೆ ಹಬ್ಬಿರುವುದು. ಜುದೇಯದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪವಾದಾಗ ನೀವು ಮಾಡಿದಂತೆ ಪಲಾಯನ ಗೈಯುವಿರಿ. ಆಗ ನನ್ನ ದೇವರಾದ ಸರ್ವೇಶ್ವರ ತಮ್ಮ ದೂತರ ಸಮೇತ ಬರುವರು.</verse>
				<verse number="6">ಆ ದಿನ ಬಂದಾಗ ಚಳಿಯಾಗಲೀ ಮಂಜಾಗಲೀ ಇರದು. ಕತ್ತಲು ಕವಿಯದು.</verse>
				<verse number="7">ಹಗಲಿರುಳು ಎನ್ನದೆ ನಿರಂತರವೂ ಬೆಳಕಾಗುವುದು. ಸಂಜೆಯು ಸಹ ಪ್ರಾಕಾಶಮಯವಾಗಿರುವುದು. ಆದರೆ ಇದು ಯಾವಾಗ ಸಂಭವಿಸುವುದೆಂಬುದು ಸರ್ವೇಶ್ವರಸ್ವಾಮಿಗೆ ಮಾತ್ರ ತಿಳಿದಿರುವುದು.</verse>
				<verse number="8">ಆ ದಿನ ಬಂದಾಗ ಜೀವಜಲವು ಜೆರುಸಲೇಮಿನಿಂದ ಹರಿಯುವುದು. ಅದರ ಅರ್ಧಭಾಗ ಪೂರ್ವದ ಸಮುದ್ರಕ್ಕೂ ಇನ್ನರ್ಧಭಾಗ ಪಶ್ಚಿಮದ ಸಮುದ್ರಕ್ಕೂ ಹರಿಯುವುದು. ಮಳೆ, ಬೇಸಿಗೆ ಎನ್ನದೆ ಪ್ರವಾಹ ಹರಿಯುತ್ತಲೇ ಇರುವುದು.</verse>
				<verse number="9">ಆಗ ಸರ್ವೇಶ್ವರ ಜಗಕ್ಕೆಲ್ಲಾ ಅರಸರಾಗಿರುವರು. ಅವರೊಬ್ಬರೇ ದೇವರೆಂದು, ಅವರ ಹೆಸರೊಂದೇ ಸ್ತುತ್ಯಾರ್ಹವೆಂದು ಎಲ್ಲರಿಗೂ ತಿಳಿದಿರುವುದು.</verse>
				<verse number="10">ಉತ್ತರದಲ್ಲಿರುವ ಗೆಬದಿಂದ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ನಾಡೆಲ್ಲ ಸಮತಟ್ಟಾಗಿರುವುದು. ಜೆರುಸಲೇಮ್ ನಗರ ಮಾತ್ರ ಸುತ್ತಮುತ್ತಲಿನ ಪ್ರದೇಶಗಳಿಗಿಂತ ಎತ್ತರವಾಗಿ ನಿಲ್ಲುವುದು. ಒಂದು ಕಡೆ ಬೆನ್ಯಾಮಿನ್ ಬಾಗಿಲಿನಿಂದ ಪೂರ್ವಕಾಲದ ಮೂಲೆಯ ಬಾಗಿಲ ತನಕವೂ ಹನನೇಲಿನ ಗೋಪುರದಿಂದ ಅರಸನ ದ್ರಾಕ್ಷೆಯ ಆಲೆಗಳ ಪರಿಯಂತವೂ ಹರಡಿರುವುದು.</verse>
				<verse number="11">ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪಕ್ಕೆ ತುತ್ತಾಗದೆ ಜನರು ನೆಮ್ಮದಿಯಾಗಿ ನೆಲೆಗೊಂಡಿರುವರು.</verse>
				<verse number="12">ಜೆರುಸಲೇಮಿನ ಮೇಲೆ ಮುತ್ತಿಗೆ ಹಾಕುವ ಸಕಲ ರಾಷ್ಟ್ರಗಳಿಗೂ ಸರ್ವೇಶ್ವರ ಭಯಂಕರ ವ್ಯಾಧಿಯೊಂದು ತಗಲುವಂತೆ ಮಾಡುವರು. ಜೀವದಿಂದಿರುವಾಗಲೇ ಜನರ ದೇಹ ಕೊಳೆತುಹೋಗುವುದು. ಕಣ್ಣು ಗುಣಿಯಲ್ಲೇ ಇಂಗಿಹೋಗುವುದು. ನಾಲಗೆ ಬಾಯಲ್ಲೇ ಬತ್ತಿಹೋಗುವುದು.</verse>
				<verse number="13">ಸರ್ವೇಶ್ವರ ಆ ದಿನದಂದು ನಾಡಿನಲ್ಲಿ ಕೋಲಾಹಲವನ್ನೆಬ್ಬಿಸಲು, ಜನರು ಭಯಭೀತಿಗೆ ಒಳಗಾಗುವರು. ಒಬ್ಬರನ್ನೊಬ್ಬರು ತಡೆಹಿಡಿದು ಹೊಡೆದಾಡುವರು.</verse>
				<verse number="14">ಜುದೇಯವು ಜೆರುಸಲೇಮಿನ ಪರವಾಗಿ ಯುದ್ಧಮಾಡುವುದು. ಸುತ್ತಮುತ್ತಲಿನ ರಾಷ್ಟ್ರಗಳ ಆಸ್ತಿಯನ್ನೆಲ್ಲಾ - ಬೆಳ್ಳಿಬಂಗಾರ, ಬಟ್ಟೆಬರೆಗಳನ್ನೆಲ್ಲಾ - ರಾಶಿರಾಶಿಯಾಗಿ ದೋಚಿಕೊಳ್ಳಲಾಗುವುದು.</verse>
				<verse number="15">ನಾಡಿನ ಜನರಿಗೆ ತಗಲುವಂಥ ವ್ಯಾಧಿಯೇ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಮುಂತಾದ ಪಾಳೆಯದಲ್ಲಿನ ಎಲ್ಲ ಪಶುಪ್ರಾಣಿಗಳಿಗೂ ತಗಲುವುದು.</verse>
				<verse number="16">ಅನಂತರ ಜೆರುಸಲೇಮಿಗೆ ಮುತ್ತಿಗೆ ಹಾಕಿದ ರಾಷ್ಟ್ರಗಳಲ್ಲಿ ಅಳಿದುಳಿದವರೆಲ್ಲರು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ರಾಜಾಧಿರಾಜನೆಂದು ಆರಾಧಿಸುವುದಕ್ಕೂ ಪರ್ಣಕುಟೀರಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷ ಅಲ್ಲಿಗೆ ಬರುವರು.</verse>
				<verse number="17">ಜನಾಂಗಗಳಲ್ಲಿ ಯಾರಾದರೂ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯನ್ನು ರಾಜಾಧಿರಾಜನೆಂದು ಆರಾಧಿಸಲು ಬರದೆಹೋದರೆ, ಅವರಿಗೆ ಮಳೆಯೇ ಬರದು.</verse>
				<verse number="18">ಈಜಿಪ್ಟಿನ ಮನೆತನದವರು ಬರದೆಹೋದರೆ, ಪರ್ಣಕುಟೀರಗಳ ಹಬ್ಬವನ್ನು ಆಚರಿಸಲು ಬರದ ರಾಷ್ಟ್ರಗಳಿಗೆ ಸರ್ವೇಶ್ವರ ವಿಧಿಸುವ ದಂಡನೆ ಅವರಿಗೂ ತಗಲುವುದು.</verse>
				<verse number="19">ಈಜಿಪ್ಟಿಗೂ ಪರ್ಣಕುಟೀರಗಳ ಹಬ್ಬವನ್ನು ಆಚರಿಸಲು ಬರದ ಸಕಲ ರಾಷ್ಟ್ರಗಳಿಗೂ ಸಂಭವಿಸುವ ದಂಡನೆ ಇದೇ.</verse>
				<verse number="20">ಆ ದಿನ ಬಂದಾಗ ‘ಸರ್ವೇಶ್ವರಸ್ವಾಮಿಗೆ ಸಮರ್ಪಿತ’ ಎಂಬ ಲಿಪಿಯು ಕುದುರೆಗಳ ಕತ್ತಿಗೆ ಕಟ್ಟಿರುವ ಗಂಟೆಗಳ ಮೇಲೆ ಕೆತ್ತನೆ ಮಾಡಲಾಗಿರುವುದು. ದೇವಾಲಯದ ಪಾತ್ರೆಗಳೆಲ್ಲವು ಬಲಿಪೀಠದ ಪಾತ್ರೆಗಳಷ್ಟೆ ಪವಿತ್ರವಾಗಿರುವುವು.</verse>
				<verse number="21">ಜೆರುಸಲೇಮಿನಲ್ಲಿಯೂ ಜುದೇಯದಲ್ಲಿಯೂ ಇರುವ ಸಕಲ ಅಡಿಗೆಪಾತ್ರೆಗಳು ಸರ್ವೇಶ್ವರಸ್ವಾಮಿಗೆ ಸಮರ್ಪಿತವಾಗಿರುವುವು. ಬಲಿಯನ್ನರ್ಪಿಸಲು ಬರುವವರೆಲ್ಲರೂ ಬಲಿಪಶುವಿನ ಮಾಂಸವನ್ನು ಬೇಯಿಸಲು ಈ ಪಾತ್ರೆಗಳನ್ನು ಬಳಸುವರು. ಆ ದಿನ ಬಂದಾಗ ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಆಲಯದಲ್ಲಿ ಯಾವ ವರ್ತಕನೂ ಇರನು.</verse>
			</chapter>
		</book>
		<book number="39">
			<chapter number="1">
				<verse number="1">ಮಲಾಕಿಯನ ಮುಖಾಂತರ ಇಸ್ರಯೇಲ್ ಜನರಿಗೆ ಸರ್ವೇಶ್ವರ ನೀಡಿದ ದೈವೋಕ್ತಿ:</verse>
				<verse number="2">“ನಿಮ್ಮ ಮೇಲೆ ನನಗೆ ಪ್ರೀತಿ ಇದೆ” ಎನ್ನುತ್ತಾರೆ ಸರ್ವೇಶ್ವರ. ನೀವಾದರೋ, “ಯಾವ ವಿಷಯದಲ್ಲಿ ನಮಗೆ ಪ್ರೀತಿ ತೋರಿಸಿದ್ದೀರಿ?” ಎಂದು ಕೇಳುತ್ತೀರಿ. ಅದಕ್ಕೆ ಅವರು, “ಏಸಾವನು ಯಕೋಬನ ಅಣ್ಣನಲ್ಲವೇ? ಆದರೂ ನಾನು ಯಕೋಬನನ್ನು ಪ್ರೀತಿಸಿದೆ;</verse>
				<verse number="3">ಏಸಾವನನ್ನು ದ್ವೇಷಿಸಿದೆ; ಅಲ್ಲದೆ ಏಸಾವನಿಗೆ ಸೇರಿದ ಮಲೆನಾಡುಗಳನ್ನು ಹಾಳುಮಾಡಿ, ಅವನ ಪಿತ್ರಾರ್ಜಿತ ರಾಜ್ಯವನ್ನು ನಾಯಿನರಿಗಳ ಬೀಡಾಗಿಸಿದೆ,” ಎಂದು ಉತ್ತರಿಸುತ್ತಾರೆ.</verse>
				<verse number="4">ಏಸಾವನ ವಂಶದವರಾದ ಎದೋಮ್ಯರು, “ನಮ್ಮ ನಾಡು ಹಾಳಾಯಿತು; ಆದರೆ ಹಾಳುಬಿದ್ದದ್ದನ್ನು ಮರಳಿ ಕಟ್ಟುವೆವು,” ಎನ್ನಬಹುದು. ಅದಕ್ಕೆ ಸೇನಾಧೀಶ್ವರ ಸರ್ವೇಶ್ವರ ಕೊಡುವ ಉತ್ತರ ಇದು: “ಅವರು ಕಟ್ಟಲಿ; ನಾನು ಅವುಗಳನ್ನು ಕೆಡವಿಹಾಕುವೆ. ‘ಅವರು ಕೇಡಿಗರು. ಸರ್ವೇಶ್ವರಸ್ವಾಮಿಯ ಕೋಪಕ್ಕೆ ಗುರಿಯಾದವರು’ ಎಂದು ಜನರೇ ಆಡಿಕೊಳ್ಳುವರು.”</verse>
				<verse number="5">ಇಸ್ರಯೇಲಿನ ಜನರಾದ ನೀವು ಇದನ್ನು ಕಣ್ಣಾರೆ ಕಂಡು, “ಸರ್ವೇಶ್ವರ ಇಸ್ರಯೇಲಿನ ಹೊರಗೂ ಮಹಾಮಹಿಮೆಯುಳ್ಳವರು!” ಎಂದು ಹೇಳಿಕೊಳ್ಳುವಿರಿ.</verse>
				<verse number="6">“ನನ್ನ ನಾಮವನ್ನು ಅವಮಾನಗೊಳಿಸುವ ಯಾಜಕರೇ, ಮಗನು ತಂದೆಯನ್ನು, ದಾಸನು ದಣಿಯನ್ನು ಸನ್ಮಾನಿಸುವುದು ಸಹಜ. ನಾನು ತಂದೆಯಾಗಿದ್ದರೂ ನೀವು ನನಗೆ ಸಲ್ಲಿಸುವ ಸನ್ಮಾನವೆಲ್ಲಿ? ನಾನು ದಣಿಯಾಗಿದ್ದರೂ ನೀವು ನನಗೆ ತೋರಿಸುವ ಭಯಭಕ್ತಿ ಎಲ್ಲಿ?” ಎಂದು ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನೇ ಕೇಳುತ್ತಾರೆ. ಆದರೆ, ನೀವು: “ಯಾವ ವಿಷಯದಲ್ಲಿ ನಿಮ್ಮ ನಾಮವನ್ನು ಅವಮಾನಗೊಳಿಸಿದ್ದೇವೆ?” ಎಂದು ಕೇಳುತ್ತೀರಿ.</verse>
				<verse number="7">“ನನ್ನ ಬಲಿಪೀಠದ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸಿ ನನ್ನನ್ನು ಅವಮಾನಗೊಳಿಸಿದ್ದೀರಿ;” “ಯಾವ ವಿಷಯದಲ್ಲಿ ನಿಮಗೆ ಅಗೌರವ ತಂದಿದ್ದೇವೆ ಎನ್ನುತ್ತೀರೋ? ‘ಸರ್ವೇಶ್ವರಸ್ವಾಮಿಯ ವೇದಿಕೆಗೆ ಘನತೆ ಏನಿದೆ?’ ಎಂದು ಹೇಳಿಕೊಳ್ಳುವುದರಲ್ಲಿದೆ ಆ ಅಗೌರವ.</verse>
				<verse number="8">ಕುರುಡಾದ ಪಶುಗಳನ್ನು ಬಲಿಯರ್ಪಿಸುವುದು ತಪ್ಪಲ್ಲವೆ? ಊನವಾದ ರೋಗದ ಪಶುಗಳನ್ನು ಅರ್ಪಿಸುವುದು ದೋಷವಲ್ಲವೇ? ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ಇಂಥದ್ದನ್ನು ನಿಮ್ಮ ರಾಜಪಾಲನಿಗೆ ಕಾಣಿಕೆಯಾಗಿ ಕೊಟ್ಟರೆ ಅವನು ನಿಮ್ಮನ್ನು ಮೆಚ್ಚುವನೋ ಅಥವಾ ನಿಮ್ಮ ಕೋರಿಕೆಯನ್ನು ನೆರವೇರಿಸುವನೋ?’</verse>
				<verse number="9">ಆದುದರಿಂದ ಯಾಜಕರೇ, ದೇವರ ದಯೆ ನಿಮಗೆ ದೊರಕುವಂತೆ ಅವರನ್ನು ಒಲಿಸಿಕೊಳ್ಳಿರಿ. ಇಂಥ ಕಾಣಿಕೆ ನಿಮ್ಮ ಕೈಯಲ್ಲಿದ್ದರೆ ಯಾರಿಗಾದರು ದೇವರು ನಿಮ್ಮ ಕೋರಿಕೆಯನ್ನು ಈಡೇರಿಸುವುದುಂಟೋ? ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ:</verse>
				<verse number="10">“ನನ್ನ ಬಲಿಪೀಠದ ಮೇಲೆ ಯಾರೂ ಜ್ಯೋತಿಯನ್ನು ವ್ಯರ್ಥವಾಗಿ ಬೆಳಗಿಸದಂತೆ ಮಹಾದೇವಾಲಯದ ಬಾಗಿಲನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು. ನಾನು ನಿಮ್ಮನ್ನು ಮೆಚ್ಚಿಕೊಂಡಿಲ್ಲ. ನಿಮ್ಮ ಕೈಯಿಂದ ಕಾಣಿಕೆಗಳನ್ನು ನಾನು ಸ್ವೀಕರಿಸುವುದಿಲ್ಲ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.</verse>
				<verse number="11">“ಸೂರ್ಯೋದಯದಿಂದ ಸೂರ್ಯಾಸ್ತಮದವರೆಗೆ ಸರ್ವರಾಷ್ಟ್ರಗಳಲ್ಲಿ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು. ಎಲ್ಲೆಲ್ಲಿಯೂ ನನಗೆ ಧೂಪಾರತಿಯನ್ನೂ ಕಾಣಿಕೆಗಳನ್ನೂ ಜನರು ಅರ್ಪಿಸುವರು. ಹೌದು, ಸರ್ವರಾಷ್ಟ್ರಗಳಲ್ಲಿಯೂ ನನ್ನ ನಾಮಕ್ಕೆ ಮಹಿಮೆ ಸಲ್ಲುವುದು,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.</verse>
				<verse number="12">ನೀವಾದರೋ, ‘ಸರ್ವೇಶ್ವರಸ್ವಾಮಿಯ ಪೀಠ ಅಶುದ್ಧ; ಅದರ ಮೇಲಿನ ಆಹಾರಪದಾರ್ಥಗಳು ಅಸಹ್ಯ’ ಎಂದು ಹೇಳಿ ನನ್ನ ನಾಮಕ್ಕೆ ಅಪಕೀರ್ತಿ ತರುತ್ತೀರಿ.</verse>
				<verse number="13">ಅಯ್ಯೋ, ಎಷ್ಟು ಬೇಸರವಾದುದು ಈ ಸೇವೆ’ ಎಂದುಕೊಂಡು ನೀವು ಅದನ್ನು ತಾತ್ಸಾರಮಾಡುತ್ತೀರಿ. “ಕಳವಿನ ಪಶುವನ್ನು, ರೋಗ ಹಿಡಿದ, ಊನವಾದ ಪ್ರಾಣಿಯನ್ನು ಅರ್ಪಿಸುತ್ತೀರಿ. ಇಂಥ ಕಾಣಿಕೆಯನ್ನು ನಿಮ್ಮ ಕೈಗಳಿಂದ ನಾನು ಸ್ವೀಕರಿಸಲೋ?’ ಎಂದು ಕೇಳುತ್ತಾರೆ ಸೇನಾಧೀಶ್ವರ ಸರ್ವೇಶ್ವರ.</verse>
				<verse number="14">“ತನ್ನ ಹಿಂಡಿನಲ್ಲಿರುವ ಗಂಡು ಪಶುವನ್ನು ಕೊಡುವುದಾಗಿ ಹರಕೆ ಹೊತ್ತು, ಬದಲಿಗೆ ಕಳಂಕವಾದ ಪಶುವನ್ನು ಸರ್ವೇಶ್ವರಸ್ವಾಮಿಗೆ ಬಲಿದಾನಮಾಡುವವನು ಮೋಸಗಾರ, ಅವನು ಶಾಪಗ್ರಸ್ತ. ನಾನೋ ರಾಜಾಧಿರಾಜ. ನನ್ನ ನಾಮಕ್ಕೆ ಅನ್ಯರಾಷ್ಟ್ರಗಳೂ ಭಯಪಡುತ್ತವೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.</verse>
			</chapter>
			<chapter number="2">
				<verse number="1">ಸೇನಾಧೀಶ್ವರ ಸರ್ವೇಶ್ವರ ಯಾಜಕರಿಗೆ ಹೀಗೆ ಹೇಳುತ್ತಾರೆ: “ನಿಮಗೆ ನಾನು ನೀಡುವ ಆಜ್ಞೆಯಿದು:</verse>
				<verse number="2">ನನ್ನ ನಾಮಕ್ಕೆ ಮಹಿಮೆ ಸಲ್ಲಿಸಬೇಕು. ಇದನ್ನು ನೀವು ಮನದಟ್ಟು ಮಾಡಿಕೊಳ್ಳಬೇಕು. ನನ್ನ ಈ ಮಾತಿಗೆ ಕಿವಿಗೊಡದಿದ್ದರೆ ನಿಮಗೆ ಶಾಪವನ್ನು ತರುವೆನು. ನಿಮ್ಮ ವರಮಾನಗಳನ್ನೆಲ್ಲ ಶಾಪವಾಗಿ ಮಾರ್ಪಡಿಸುವೆನು; ಈಗಾಗಲೇ ಮಾರ್ಪಡಿಸಿರುವೆನು. ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಂಡಿಲ್ಲ.</verse>
				<verse number="3">ಆದ್ದರಿಂದ ಇದನ್ನು ಗಮನವಿಟ್ಟು ಕೇಳಿ: ನಿಮ್ಮ ಸಂತಾನವನ್ನು ಖಂಡಿಸುವೆನು. ನಿಮ್ಮ ಮುಖಕ್ಕೆ ಸಗಣಿ ಬಳಿಯುವೆನು. ನಿಮ್ಮ ಯಜ್ಞಪಶುಗಳ ಸಗಣಿಯನ್ನೇ ಎರಚುವೆನು. ನೀವು ಆ ಸಗಣಿ ತಿಪ್ಪೆಯ ಪಾಲಾಗುವಿರಿ.</verse>
				<verse number="4">ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಊರ್ಜಿತವಾಗಬೇಕೆಂದೇ ಈ ಅಪ್ಪಣೆಯನ್ನು ನಿಮಗೆ ಕೊಟ್ಟಿದ್ದೇನೆಂದು ಆಗ ನಿಮಗೆ ಗೊತ್ತಾಗುವುದು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.</verse>
				<verse number="5">“ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಜೀವದಾತ ಹಾಗು ಬದುಕಿನಲ್ಲಿ ಶಾಂತಿ ತರುವಂಥ ಒಡಂಬಡಿಕೆ. ಅವರು ಭಯಭಕ್ತಿಯಿಂದ ಬಾಳಲೆಂದೇ ನಾನು ಅದನ್ನು ಅವರಿಗೆ ವಿಧಿಸಿದ್ದು. ಅಂತೆಯೇ ಹಿಂದೆ ಅವರು ನನ್ನಲ್ಲಿ ಭಯಭಕ್ತಿಯಿಟ್ಟು ನಡೆದುಕೊಂಡರು; ನನ್ನ ನಾಮಕ್ಕೆ ಅಂಜಿ ಬಾಳಿದರು.</verse>
				<verse number="6">ಸತ್ಯಬೋಧೆ ಅವರ ಬಾಯಲ್ಲಿ ನೆಲೆಸಿತ್ತು. ಅವರ ತುಟಿಗಳಿಂದ ಅಪರಾಧವಾದುದೇನೂ ಹೊರಬರಲಿಲ್ಲ. ಶಾಂತಿಯಿಂದ, ಸದ್ಧರ್ಮದಿಂದ ಅವರು ನನ್ನೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡರು. ಹಲವರನ್ನು ಪಾಪಕ್ಕೆ ವಿಮುಖರಾಗಿಸಿದರು.</verse>
				<verse number="7">ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”</verse>
				<verse number="8">“ಈಗಲಾದರೋ ಯಾಜಕರೇ, ನೀವು ದಾರಿ ತಪ್ಪಿದ್ದೀರಿ. ನಿಮ್ಮ ಉಪದೇಶದಿಂದ ಅನೇಕರು ಮುಗ್ಗರಿಸಿಬೀಳುವಂತೆ ಮಾಡಿದ್ದೀರಿ. ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ.” ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿಯಿದು.</verse>
				<verse number="9">“ನೀವು ನನ್ನ ಮಾರ್ಗವನ್ನು ಅನುಸರಿಸಲಿಲ್ಲ. ಧರ್ಮಶಾಸ್ತ್ರವನ್ನು ಬೋಧಿಸುವಾಗ ಪಕ್ಷಪಾತಮಾಡಿದ್ದೀರಿ. ಆದ್ದರಿಂದ ಎಲ್ಲ ಜನರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.</verse>
				<verse number="10">ನಮ್ಮೆಲ್ಲರಿಗೂ ತಂದೆ ಒಬ್ಬರೇ ಅಲ್ಲವೇ? ನಮ್ಮೆಲ್ಲರನ್ನು ಸೃಷ್ಟಿಸಿದ ದೇವರು ಒಬ್ಬರೇ ಅಲ್ಲವೇ? ಹೀಗಿರಲು ನಾವು ಒಬ್ಬರಿಗೊಬ್ಬರು ದ್ರೋಹ ಮಾಡುವುದೇಕೆ? ದೇವರು ನಮ್ಮ ಪೂರ್ವಜರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನಾವು ಉಲ್ಲಂಘಿಸುವುದೇಕೆ?</verse>
				<verse number="11">ಜುದೇಯದ ಜನರು ದ್ರೋಹಮಾಡಿದ್ದಾರೆ. ಇಸ್ರಯೇಲಿನಲ್ಲಿಯೂ ಜೆರುಸಲೇಮಿನಲ್ಲಿಯೂ ದುರಾಚಾರ ನಡೆಯುತ್ತಿದೆ. ಯೆಹೂದ್ಯರು ಅನ್ಯದೇವತೆಯನ್ನು ಆರಾಧಿಸುವ ಮಹಿಳೆಯರನ್ನು ಮದುವೆಯಾಗಿ, ಸರ್ವೇಶ್ವರಸ್ವಾಮಿಗೆ ಪ್ರಿಯವಾದ ದೇವಾಲಯವನ್ನು ಹೊಲೆಗೆಡಿಸಿದ್ದಾರೆ.</verse>
				<verse number="12">ಇಂಥ ಕೃತ್ಯವನ್ನು ಎಸಗುವವನು ಎಂಥ ಕುಟುಂಬಕ್ಕಾದರೂ ಸೇರಿರಲಿ - ಅಂಥವನನ್ನು ಸೇನಾಧೀಶ್ವರ ಸರ್ವೇಶ್ವರ ಯಕೋಬನ ಕುಲದಿಂದ ಹೊರಗೆ ಹಾಕುವರು.</verse>
				<verse number="13">ನೀವು ಇನ್ನೊಂದು ಕೆಲಸವನ್ನು ಮಾಡುತ್ತೀರಿ: ‘ಸರ್ವೇಶ್ವರ ನಮ್ಮ ಕಾಣಿಕೆಗಳನ್ನು ಲಕ್ಷಿಸುವುದಿಲ್ಲ. ನಮ್ಮ ಕೈಯಿಂದ ಅವುಗಳನ್ನು ಪ್ರಸನ್ನತೆಯಿಂದ ಸ್ವೀಕರಿಸುವುದಿಲ್ಲ’ ಎಂದುಕೊಂಡು ನರಳುತ್ತಾ ಗೋಳಾಡುತ್ತಾ ಕಣ್ಣೀರಿನಿಂದ ಬಲಿಪೀಠವನ್ನೇ ಮುಳುಗಿಸಿಬಿಡುತ್ತೀರಿ.</verse>
				<verse number="14">ಇದಕ್ಕೆ ಕಾರಣವೇನೆಂದು ಕೇಳುತ್ತೀರೋ? ಕಾರಣ ಇದೇ: ನಿನಗೂ ನಿನ್ನ ಹೆಂಡತಿಗೂ ಯೌವನದಲ್ಲಿ ಆದ ವಿವಾಹದ ಒಪ್ಪಂದಕ್ಕೆ ಸರ್ವೇಶ್ವರಸ್ವಾಮಿಯೇ ಸಾಕ್ಷಿ. ಆದರೂ ನಿನ್ನ ಅರ್ಧಾಂಗಿ ಹಾಗು ನ್ಯಾಯವಾದ ಧರ್ಮಪತ್ನಿ ಆದ ಆಕೆಗೆ ದ್ರೋಹಮಾಡಿರುವೆ.</verse>
				<verse number="15">ದೇವರು ನಿನ್ನ ಮತ್ತು ಆಕೆಯ ತನುಮನಗಳನ್ನು ಒಂದಾಗಿ ಮಾಡಲಿಲ್ಲವೆ? ಅವರ ಉದ್ದೇಶವಾದರೂ ಏನಾಗಿತ್ತು? ದೇವರ ಮಕ್ಕಳಾಗಿ ಬಾಳುವ ಸಂತಾನಪ್ರಾಪ್ತಿಯೇ ಅವರ ಉದ್ದೇಶವಾಗಿತ್ತು. ಆದಕಾರಣ ಯೌವ್ವನದಲ್ಲಿ ಮಡದಿಗೆ ದ್ರೋಹವೆಸಗದಂತೆ, ಪ್ರತಿಯೊಬ್ಬನೂ ಎಚ್ಚರಿಕೆಯಿಂದಿರಲಿ.</verse>
				<verse number="16">ಇಸ್ರಯೇಲಿನ ದೇವರಾದ ಸರ್ವೇಶ್ವರ ಹೀಗೆ ಹೇಳುತ್ತಾರೆ: “ವಿವಾಹ ವಿಚ್ಛೇದನವನ್ನು ದ್ವೇಷಿಸುತ್ತೇನೆ. ತನ್ನ ಮಡದಿಗೆ ನಂಬಿಕೆದ್ರೋಹವನ್ನೆಸಗುವವನನ್ನು ಹಾಗು ದೌರ್ಜನ್ಯ ತೋರುವವನನ್ನು ಹಗೆಮಾಡುತ್ತೇನೆ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ಆದಕಾರಣ ಮನಃಪೂರ್ವಕವಾಗಿ ಎಚ್ಚರಿಕೆಯಿಂದಿರಿ ನಿಮ್ಮ ಮಡದಿಗೆ ದ್ರೋಹವೆಸಗದಿರಿ.</verse>
				<verse number="17">“ನೀವು ನಿಮ್ಮ ಮಾತುಗಳಿಂದ ಪ್ರಭುವನ್ನು ಬೇಸರಗೊಳಿಸಿದ್ದೀರಿ. ‘ಯಾವ ವಿಷಯದಲ್ಲಿ ಅವರನ್ನು ಬೇಸರಗೊಳಿಸಿದ್ದೇವೆ?’ ಎನ್ನುತ್ತೀರೋ? ‘ಕೆಡುಕರೆಲ್ಲರೂ ದೇವರ ದೃಷ್ಟಿಯಲ್ಲಿ ಒಳ್ಳೆಯವರು. ಅವರೇ ಆತನಿಗೆ ಬೇಕಾದವರು’ ಎಂದು ಹೇಳುವುದರಿಂದ: ‘ನ್ಯಾಯ ತೀರಿಸುವ ದೇವರೆಲ್ಲಿ?’ ಎಂದು ಕೇಳುವುದರಿಂದ.”</verse>
			</chapter>
			<chapter number="3">
				<verse number="1">ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”</verse>
				<verse number="2">“ಆದರೆ ಆತನು ಬರುವಾಗ ಆತನನ್ನು ಎದುರುಗೊಳ್ಳಬಲ್ಲವನು ಯಾರು? ಆತನ ದರ್ಶನವನ್ನು ಪಡೆದು ಬದುಕಬಲ್ಲವನು ಯಾರು?</verse>
				<verse number="3">ಆತನು ಅಕ್ಕಸಾಲಿಗನ ಕುಲುಮೆಯ ಬೆಂಕಿಗೂ ಅಗಸನ ಚೌಳಿಗೂ ಸಮಾನನು. ಬೆಳ್ಳಿಯನ್ನುಶುದ್ಧೀಕರಿಸುವ ಅಕ್ಕಸಾಲಿಗನಂತೆ ಲೇವಿಯ ವಂಶದವರನ್ನು ಶುದ್ಧಗೊಳಿಸುವನು; ಬೆಳ್ಳಿಬಂಗಾರದಂತೆ ಶುದ್ಧೀಕರಿಸುವನು. ಆಗ ಅವರು ಯೋಗ್ಯವಾದ ಕಾಣಿಕೆಗಳನ್ನು ಸರ್ವೇಶ್ವರಸ್ವಾಮಿಗೆ ತಂದೊಪ್ಪಿಸುವರು.</verse>
				<verse number="4">ಪೂರ್ವದಿನಗಳಲ್ಲಿ, ಪುರಾತನ ಕಾಲದಲ್ಲಿ ಇದ್ದಂತೆ ಜೂದಾ ಮತ್ತು ಜೆರುಸಲೇಮಿನ ಜನರ ಕಾಣಿಕೆಗಳು ಆ ಸ್ವಾಮಿಗೆ ಮೆಚ್ಚುಗೆಯಾಗಿರುವುವು.”</verse>
				<verse number="5">“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.</verse>
				<verse number="6">“ಯಕೋಬನ ಕುಲಪುತ್ರರೇ, ನಾನು ಅದಲುಬದಲಾಗದ ಸರ್ವೇಶ್ವರ, ಈ ಕಾರಣದಿಂದ ನೀವು ಅಳಿಯದೆ ಉಳಿದಿದ್ದೀರಿ.</verse>
				<verse number="7">ನಿಮ್ಮ ಪೂರ್ವಜರ ಕಾಲದಿಂದಲೂ ನನ್ನ ವಿಧಿಗಳನ್ನು ಅನುಸರಿಸದೆ, ಅಡ್ಡದಾರಿ ಹಿಡಿದಿದ್ದೀರಿ. ಈಗ ಮರಳಿ ನನಗೆ ಅಭಿಮುಖರಾಗಿರಿ. ನಾನು ನಿಮಗೆ ಅಭಿಮುಖನಾಗುವೆನು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ. ‘ನಾವು ನಿಮಗೆ ಅಭಿಮುಖರಾಗಲು ಏನು ಮಾಡಬೇಕು?’ ಎಂದು ಕೇಳುತ್ತೀರೋ?</verse>
				<verse number="8">ನರಮಾನವನು ದೇವರಿಗೆ ಮೋಸಮಾಡಬಹುದೋ? ಆದರೂ ನೀವು ನನಗೆ ಮೋಸಮಾಡುತ್ತಿದ್ದೀರಿ. ‘ನಿಮಗೆ ಹೇಗೆ ಮೋಸಮಾಡುತ್ತಿದ್ದೇವೆ?’ ಎಂದು ಕೇಳುತ್ತೀರೋ? ನೀವು ತೆರೆಬೇಕಾದ ದಶಮಾಂಶದಲ್ಲೂ, ಕೊಡಬೇಕಾದ ಕಾಣಿಕೆಯಲ್ಲೂ ಮೋಸಮಾಡುತ್ತಿದ್ದೀರಿ.</verse>
				<verse number="9">ನೀವೂ ನಿಮ್ಮ ಜನಾಂಗವೆಲ್ಲವೂ ನನಗೆ ಮೋಸಮಾಡುವುದರಿಂದ ನೀವೆಲ್ಲರೂ ಶಾಪಗ್ರಸ್ತರು.</verse>
				<verse number="10">ನನ್ನ ಆಲಯದಲ್ಲಿ ಆಹಾರಕ್ಕೆ ಕೊರತೆಯಿಲ್ಲದಿರುವಂತೆ ದಶಮಾಂಶವನ್ನು ಪೂರ್ತಿಯಾಗಿ ನನ್ನ ಭಂಡಾರಕ್ಕೆ ತೆಗೆದುಕೊಂಡು ಬನ್ನಿ. ಆ ಬಳಿಕ ಪರಲೋಕದ ದ್ವಾರಗಳನ್ನು ತೆರೆದು, ತುಂಬಿತುಳುಕುವಷ್ಟು ವರದಾನಗಳನ್ನು ನಿಮ್ಮ ಮೇಲೆ ಸುರಿಸುವೆನೋ ಇಲ್ಲವೋ ಎಂಬುದನ್ನು ಪರೀಕ್ಷಿಸಿನೋಡಿ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.</verse>
				<verse number="11">“ನಿಮ್ಮ ಭೂಮಿಯ ಬೆಳೆ ಹುಳುಹುಪ್ಪಟೆಗಳಿಂದ ನಾಶವಾಗದಂತೆ ನೋಡಿಕೊಳ್ಳುವೆನು. ನಿಮ್ಮ ತೋಟದಲ್ಲಿ ದ್ರಾಕ್ಷಿಹಣ್ಣು ಉದುರಿಹೋಗದಂತೆ ಮಾಡುವೆನು.</verse>
				<verse number="12">ಆಗ ಎಲ್ಲ ರಾಷ್ಟ್ರಗಳು ನಿಮ್ಮನ್ನು ಧನ್ಯರೆಂದು ಹೊಗಳುವರು. ನಿಮ್ಮ ನಾಡು ಚೆಲುವಿನ ನಾಡಾಗಿರುವುದು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.</verse>
				<verse number="13">“ನೀವು ನನಗೆ ಕಠಿಣವಾದ ಮಾತುಗಳನ್ನಾಡಿದ್ದೀರಿ,” ಎನ್ನುತ್ತಾರೆ ಸರ್ವೇಶ್ವರ. “ನೀವು, ‘ನಿನಗೆ ವಿರುದ್ಧವಾಗಿ ನಾವು ಮಾತನಾಡಿದ್ದೇನು?’ ಎಂದು ಕೇಳುತ್ತೀರೋ?</verse>
				<verse number="14">ದೇವರಿಗೆ ಸೇವೆಮಾಡುವುದು ವ್ಯರ್ಥ. ಅವರು ಹೇಳಿದಂತೆ ನಾವು ನಡೆದುಕೊಳ್ಳುವುದರಿಂದ ಪ್ರಯೋಜನವೇನು? ನಮ್ಮ ಕೃತ್ಯಗಳಿಗಾಗಿ ಸೇನಾಧೀಶ್ವರ ಸರ್ವೇಶ್ವರನ ಮುಂದೆ ದುಃಖಪಡುವುದರಿಂದ ಲಾಭವೇನು?</verse>
				<verse number="15">ಅಹಂಕಾರಿಗಳೇ ಭಾಗ್ಯವಂತರು; ದುಷ್ಕರ್ಮಿಗಳು ಚೆನ್ನಾಗಿ ಅಭಿವೃದ್ಧಿಯಾಗುತ್ತಿದ್ದಾರೆ, ಅಷ್ಟೇ ಅಲ್ಲ, ದೇವರನ್ನೇ ಪರೀಕ್ಷೆಗೆ ಗುರಿಪಡಿಸಿ ಸುರಕ್ಷಿತವಾಗಿದ್ದಾರೆ,” ಎಂದು ನೀವು ಹೇಳಿದ್ದೀರಿ.</verse>
				<verse number="16">ಇಂಥ ಮಾತುಗಳನ್ನು ಕೇಳಿ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವರು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಸರ್ವೇಶ್ವರ ಅವರಿಗೆ ಕಿವಿಗೊಟ್ಟು ಆಲಿಸಿದರು. ಭಯಭಕ್ತಿಯಿಂದ ತಮ್ಮ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತಮ್ಮ ಮುಂದಿದ್ದ ದಾಖಲೆ ಪುಸ್ತಕದಲ್ಲಿ ಬರೆಸಿದರು.</verse>
				<verse number="17">ಸೇನಾಧೀಶ್ವರ ಸರ್ವೇಶ್ವರ ಇಂತೆನ್ನುತ್ತಾರೆ: “ಇವರು ನನ್ನ ಜನರು; ನಾನು ಕಾರ್ಯತತ್ಪರನಾಗುವ ದಿನದಂದು ಅವರು ನನಗೆ ಸ್ವಕೀಯಜನರಾಗಿರುವರು. ತಂದೆಯೊಬ್ಬನು ತನಗೆ ಸೇವೆಮಾಡುವ ಮಗನನ್ನು ಕಾಪಾಡುವಂತೆ ನಾನು ಅವರನ್ನು ಕಾಪಾಡುವೆನು.</verse>
				<verse number="18">ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.</verse>
			</chapter>
			<chapter number="4">
				<verse number="1">“ಇಗೋ, ಆ ದಿನ ಬರುತ್ತಿದೆ. ಒಲೆಯಂತೆ ಉರಿಯುತ್ತಿದೆ. ಎಲ್ಲ ಅಹಂಕಾರಿಗಳು, ದುಷ್ಕರ್ಮಿಗಳು, ಒಣಹುಲ್ಲಿನಂತೆ ಆಗಿಹೋಗಿದ್ದಾರೆ. ಆದ್ದರಿಂದ ಬರಲಿರುವ ಆ ದಿನದಂದು ಸುಟ್ಟು ಭಸ್ಮವಾಗುತ್ತಾರೆ. ಬುಡ ರೆಂಬೆಸಹಿತ ಬೂದಿಯಾಗುತ್ತದೆ,” ಎನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ.</verse>
				<verse number="2">“ನನ್ನ ನಾಮದಲ್ಲಿ ಭಯಭಕ್ತಿಯಿಂದ ಇರುವ ನಿಮಗಾದರೋ ಜೀವೋದ್ಧಾರಕನೆಂಬ ಸೂರ್ಯನು ಉದಯಿಸಿ, ಸುಕ್ಷೇಮವನ್ನೀಯುವ ಕಿರಣಗಳನ್ನು ಬೀರುವನು. ಕೊಟ್ಟಿಗೆಯಿಂದ ಹೊರಬಂದ ಕರುಗಳಂತೆ ನೀವು ಕುಣಿದು ಕುಪ್ಪಳಿಸುವಿರಿ.</verse>
				<verse number="3">ನಾನು ಕಾರ್ಯತತ್ಪರನಾಗುವ ದಿನದಂದು ನೀವು ದುಷ್ಟರನ್ನು ತುಳಿದುಬಿಡುವಿರಿ. ಅವರು ನಿಮ್ಮ ಕಾಲಡಿಯ ಧೂಳಿಯಾಗುವರು.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.</verse>
				<verse number="4">“ನಾನು ನನ್ನ ದಾಸನಾದ ಮೋಶೆಗೆ ಬೋಧಿಸಿದ ಧರ್ಮಶಾಸ್ತ್ರವನ್ನು ಜ್ಞಾಪಕಕ್ಕೆ ತಂದುಕೊಳ್ಳಿ. ಆ ವಿಧಿನಿಯಮಗಳನ್ನು ಆತನಿಗೆ ಹೋರೇಬ್ ಬೆಟ್ಟದಲ್ಲಿ ಕೊಟ್ಟದ್ದು ಇಸ್ರಯೇಲರು ಅವುಗಳನ್ನು ಅನುಸರಿಸಲೆಂದೇ.”</verse>
				<verse number="5">“ಇಗೋ, ಸರ್ವೇಶ್ವರಸ್ವಾಮಿಯ ಆಗಮನದ ಭಯಂಕರ ಮಹಾದಿನ ಬರುವುದಕ್ಕೆ ಮುಂಚೆ ಪ್ರವಾದಿ ಎಲೀಯನನ್ನು ನಿಮ್ಮಲ್ಲಿಗೆ ಕಳುಹಿಸುವೆನು.</verse>
				<verse number="6">ನಾನು ಬಂದು ಲೋಕವನ್ನು ಶಪಿಸಿ ನಾಶಗೊಳಿಸದಂತೆ ಆತನು ಹೆತ್ತವರ ಮನಸ್ಸನ್ನು ಮಕ್ಕಳ ಕಡೆಗೂ, ಮಕ್ಕಳ ಮನಸ್ಸನ್ನು ಹೆತ್ತವರ ಕಡೆಗೂ ಒಲಿಸಿ ಅವರನ್ನು ಒಂದಾಗಿಸುವನು.”</verse>
			</chapter>
		</book>
	</testament>
	<testament name="New">
		<book number="40">
			<chapter number="1">
				<verse number="1">ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ:</verse>
				<verse number="2">ಅಬ್ರಹಾಮನಿಗೆ ಇಸಾಕನು, ಇಸಾಕನಿಗೆ ಯಕೋಬನು, ಯಕೋಬನಿಗೆ ಯೂದ ಹಾಗೂ ಆತನ ಸಹೋದರರು ಹುಟ್ಟಿದರು.</verse>
				<verse number="3">ಯೂದನಿಗೆ ತಾಮರ ಎಂಬವಳಿಂದ, ಪೆರಸ್ ಹಾಗೂ ಜೆರಹನ್ ಹುಟ್ಟಿದರು.</verse>
				<verse number="4">ಪೆರಸನಿಗೆ ಹೆಸ್ರೋನ್, ಹೆಸ್ರೋನನಿಗೆ ರಾಮ್, ರಾಮನಿಗೆ ಅಮ್ಮಿನದಾಬ್, ಅಮ್ಮಿನದಾಬನಿಗೆ ನಹಸ್ಸೋನ್, ನಹಸ್ಸೋನನಿಗೆ ಸಲ್ಮೋನ್,</verse>
				<verse number="5">ಸಲ್ಮೋನನಿಗೆ ರಹಾಬ್ ಎಂಬವಳಿಂದ ಬೋವಜ್, ಬೋವಜನಿಗೆ ರೂತ್ ಎಂಬವಳಿಂದ ಓಬೇದ್, ಓಬೇದನಿಗೆ ಜೆಸ್ಸೆಯ,</verse>
				<verse number="6">ಜೆಸ್ಸೆಯನಿಗೆ ದಾವೀದರಸನು ಹುಟ್ಟಿದರು. ದಾವೀದನಿಗೆ ಊರಿಯನ ಹೆಂಡತಿಯಿಂದ ಸೊಲೊಮೋನ್,</verse>
				<verse number="7">ಸೊಲೊಮೋನನಿಗೆ ರೆಹಬ್ಬಾಮ, ರೆಹಬ್ಬಾಮನಿಗೆ ಅಬೀಯ, ಅಬೀಯನಿಗೆ ಆಸನ್ ಹುಟ್ಟಿದರು.</verse>
				<verse number="8">ಆಸನನಿಗೆ ಯೋಸೆಫಾತ್, ಯೋಸೆಫಾತನಿಗೆ ಯೆಹೋರಾಮ್, ಯೆಹೋರಾಮನಿಗೆ ಉಜ್ಜೀಯ ಹುಟ್ಟಿದರು.</verse>
				<verse number="9">ಉಜ್ಜೀಯನಿಗೆ ಯೋತಾಮ್, ಯೋತಾಮನಿಗೆ ಅಹಾಜ್, ಅಹಾಜನಿಗೆ ಹಿಜ್ಕೀಯನು ಹುಟ್ಟಿದರು.</verse>
				<verse number="10">ಹಿಜ್ಕೀಯನಿಗೆ ಮನಸ್ಸೆ, ಮನಸ್ಸೆಗೆ ಆಮೋನ್,</verse>
				<verse number="11">ಆಮೋನನಿಗೆ ಯೋಷೀಯ ಹುಟ್ಟಿದರು. ಯೋಷೀಯನಿಗೆ ಯೆಕೊನ್ಯ ಮತ್ತು ಅವನ ಸಹೋದರರು ಹುಟ್ಟಿದರು. ಈ ಸಮಯದಲ್ಲೇ ಇಸ್ರಯೇಲರನ್ನು ಬಾಬಿಲೋನಿಗೆ ಸೆರೆ ಒಯ್ದದ್ದು.</verse>
				<verse number="12">ಬಾಬಿಲೋನಿಗೆ ಸೆರೆಹೋದ ದಾಸ್ಯದಿನಗಳು ಮುಗಿದ ಮೇಲೆ ಯೆಕೊನ್ಯನಿಗೆ ಸಲಥಿಯೇಲ್, ಸಲಥಿಯೇಲನಿಗೆ ಜೆರುಬಾಬೆಲ್,</verse>
				<verse number="13">ಜೆರುಬಾಬೆಲನಿಗೆ ಅಬೀಹೂದ್, ಅಬೀಹೂದನಿಗೆ ಎಲ್ಯಕೀಮ್. ಎಲ್ಯಕೀಮನಿಗೆ ಅಜೋರ್ ಹುಟ್ಟಿದರು.</verse>
				<verse number="14">ಅಜೋರನಿಗೆ ಸದೋಕ್, ಸದೋಕನಿಗೆ ಅಖೀಮ್, ಅಖೀಮನಿಗೆ ಎಲಿಹೂದ್,</verse>
				<verse number="15">ಎಲಿಹೂದನಿಗೆ ಎಲಿಯಾಜರ್, ಎಲಿಯಾಜರನಿಗೆ ಮತ್ತಾನ್, ಮತ್ತಾನನಿಗೆ ಯಕೋಬ್ ಹುಟ್ಟಿದರು. ಯಕೋಬನಿಗೆ ಮರಿಯಳ ಪತಿಯಾದ ಜೋಸೆಫನು ಹುಟ್ಟಿದನು.</verse>
				<verse number="16">ಈ ಮರಿಯಳಿಂದಲೇ “ಕ್ರಿಸ್ತ” ಎಂದು ಕರೆಯಲಾಗುವ ಯೇಸುಸ್ವಾಮಿ ಹುಟ್ಟಿದ್ದು;</verse>
				<verse number="17">ಹೀಗೆ ಒಟ್ಟು, ಅಬ್ರಹಾಮನಿಂದ ದಾವೀದನವರೆಗೆ ಹದಿನಾಲ್ಕು, ದಾವೀದನಿಂದ ಬಾಬಿಲೋನಿನ ದಾಸ್ಯದಿನಗಳವರೆಗೆ ಹದಿನಾಲ್ಕು, ಬಾಬಿಲೋನಿನ ದಾಸ್ಯದಿನಗಳಿಂದ ಕ್ರಿಸ್ತರವರೆಗೆ ಹದಿನಾಲ್ಕು ತಲೆಮಾರುಗಳು.</verse>
				<verse number="18">ಕ್ರಿಸ್ತಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭ ಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ.</verse>
				<verse number="19">ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು.</verse>
				<verse number="20">ಆತನು ಈ ಕುರಿತು ಆಲೋಚಿಸುತ್ತಿದ್ದಂತೆ, ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು, “ದಾವೀದ ವಂಶದ ಜೋಸೆಫನೇ, ಮರಿಯಳನ್ನು ನಿನ್ನ ಪತ್ನಿಯನ್ನಾಗಿ ಸ್ವೀಕರಿಸಲು ಅಂಜಬೇಡ. ಆಕೆ ಗರ್ಭಧರಿಸಿರುವುದು ಪವಿತ್ರಾತ್ಮ ಪ್ರಭಾವದಿಂದಲೇ.</verse>
				<verse number="21">ಆಕೆ ಒಬ್ಬ ಮಗನನ್ನು ಹೆರುವಳು. ಆತನಿಗೆ ನೀನು ‘ಯೇಸು’ ಎಂಬ ಹೆಸರಿಡಬೇಕು. ಏಕೆಂದರೆ ತನ್ನ ಜನರನ್ನು ಅವರ ಪಾಪಗಳಿಂದ ರಕ್ಷಿಸಿ ಉದ್ಧಾರಮಾಡುವವನು ಆತನೇ,” ಎಂದನು.</verse>
				<verse number="22">“ಇಗೋ, ಕನ್ಯೆಯೊಬ್ಬಳು ಗರ್ಭತಳೆದು ಪುತ್ರನೊಬ್ಬನನ್ನು ಪ್ರಸವಿಸುವಳು ‘ಇಮ್ಮಾನುವೇಲ್’ ಎಂದು ಆತನಿಗೆ ಹೆಸರಿಡುವರು” ಎಂಬುದಾಗಿ ಪ್ರವಾದಿಯ ಮುಖಾಂತರ ಸರ್ವೇಶ್ವರ ಹೇಳಿದ ಪ್ರವಚನ ನೆರವೇರುವಂತೆ ಇದೆಲ್ಲಾ ಸಂಭವಿಸಿತು.</verse>
				<verse number="23">“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.</verse>
				<verse number="24">ಆಗ ಜೋಸೆಫನು ಎಚ್ಚೆತ್ತು ದೇವದೂತನ ಆಜ್ಞೆಯ ಪ್ರಕಾರ ಮರಿಯಳನ್ನು ವಿವಾಹಮಾಡಿಕೊಂಡನು.</verse>
				<verse number="25">ಆದರೆ ಆಕೆಯೊಡನೆ ಲೈಂಗಿಕ ಸಂಬಂಧವಿಲ್ಲದೆ ಇದ್ದನು. ಆಕೆ ಗಂಡುಮಗುವಿಗೆ ಜನ್ಮವಿತ್ತಳು. ಜೋಸೆಫನು ಆ ಮಗುವಿಗೆ ‘ಯೇಸು’ ಎಂದು ನಾಮಕರಣ ಮಾಡಿದನು.</verse>
			</chapter>
			<chapter number="2">
				<verse number="1">ಯೇಸುಸ್ವಾಮಿ ಜನಿಸಿದ್ದು ಹೆರೋದರಸನ ಕಾಲದಲ್ಲಿ: ಜುದೇಯ ನಾಡಿನ ಬೆತ್ಲೆಹೇಂ ಎಂಬ ಊರಿನಲ್ಲಿ.ಕೆಲವು ಜ್ಯೋತಿಷಿಗಳು ಪೂರ್ವದಿಕ್ಕಿನಿಂದ ಹೊರಟು ಜೆರುಸಲೇಮಿಗೆ ಬಂದರು.</verse>
				<verse number="2">“ಯೆಹೂದ್ಯರ ಅರಸ ಹುಟ್ಟಿದ್ದಾರಲ್ಲವೇ, ಅವರೆಲ್ಲಿ?” ಎಂದು ವಿಚಾರಿಸಿದರು; “ಅವರನ್ನು ಸೂಚಿಸುವ ನಕ್ಷತ್ರ ಪೂರ್ವದಲ್ಲಿ ಉದಯಿಸಿದ್ದನ್ನು ಕಂಡು ಅವರನ್ನು ಆರಾಧಿಸಲು ಇಲ್ಲಿಗೆ ಬಂದಿದ್ದೇವೆ,” ಎಂದರು.</verse>
				<verse number="3">ಇದನ್ನು ಕೇಳಿದ್ದೇ ಹೆರೋದರಸನು ಬಹಳ ತಳಮಳಗೊಂಡನು; ಅಂತೆಯೇ ಜೆರುಸಲೇಮ್ ಆದ್ಯಂತವು ಗಲಿಬಿಲಿಗೊಂಡಿತು.</verse>
				<verse number="4">ಯೆಹೂದ್ಯರ ಎಲ್ಲ ಮುಖ್ಯ ಯಾಜಕರನ್ನೂ ಧರ್ಮಶಾಸ್ತ್ರಿಗಳನ್ನೂ ಅವನು ಸಭೆಸೇರಿಸಿದನು. “ಕ್ರಿಸ್ತ ಹುಟ್ಟಬೇಕಾದುದು ಎಲ್ಲಿ?” ಎಂದು ಅವರನ್ನು ವಿಚಾರಿಸಿದನು.</verse>
				<verse number="5">ಅದಕ್ಕೆ ಅವರು, “ಜುದೇಯದಲ್ಲಿರುವ ಬೆತ್ಲೆಹೇಮಿನಲ್ಲೇ ಹುಟ್ಟುವನು; ಏಕೆಂದರೆ:</verse>
				<verse number="6">‘ಜುದೇಯ ನಾಡಿನ ಬೆತ್ಲೆಹೇಮೇ, ಜುದೇಯದ ಪ್ರಮುಖ ಪಟ್ಟಣಗಳಲ್ಲಿ ನೀನು ಅಲ್ಪಳೇನೂ ಅಲ್ಲ. ಕಾರಣ ನನ್ನ ಪ್ರಜೆ ಇಸ್ರಯೇಲನ್ನು ಪರಿಪಾಲಿಸುವವನು ನಿನ್ನಿಂದಲೇ ಉದಯಿಸಲಿರುವನು’. ಎಂದು ಪ್ರವಾದಿ ಬರೆದಿದ್ದಾನೆ” ಎಂದು ಉತ್ತರವಿತ್ತರು.</verse>
				<verse number="7">ಆಗ ಹೆರೋದನು ಆ ಜ್ಯೋತಿಷಿಗಳನ್ನು ಗೋಪ್ಯವಾಗಿ ಬರಮಾಡಿಕೊಂಡು ಅವರಿಗೆ ನಕ್ಷತ್ರ ಕಾಣಿಸಿಕೊಂಡ ಕಾಲವನ್ನು ಸ್ಪಷ್ಟವಾಗಿ ಕೇಳಿ ತಿಳಿದುಕೊಂಡನು.</verse>
				<verse number="8">ಅನಂತರ ಅವರನ್ನು ಬೆತ್ಲೆಹೇಮಿಗೆ ಕಳುಹಿಸಿಕೊಡುತ್ತಾ, “ನೀವು ಹೋಗಿ ಆ ಮಗುವನ್ನು ಚೆನ್ನಾಗಿ ಹುಡುಕಿರಿ; ಕಂಡಕೂಡಲೇ ನನಗೆ ಬಂದು ತಿಳಿಸಿರಿ. ನಾನೂ ಹೋಗಿ ಆ ಮಗುವನ್ನು ಆರಾಧಿಸಬೇಕು,” ಎಂದು ಹೇಳಿದನು.</verse>
				<verse number="9">ಜ್ಯೋತಿಷಿಗಳು ಅರಸನ ಮಾತಿಗೆ ತಲೆಬಾಗಿ ಹೊರಟರು.</verse>
				<verse number="10">ಪೂರ್ವದಿಕ್ಕಿನಲ್ಲಿ ಮೊದಲೇ ಅವರಿಗೆ ಕಾಣಿಸಿಕೊಂಡಿದ್ದ ನಕ್ಷತ್ರ ಪುನಃ ಕಾಣಿಸಿಕೊಂಡಿತು. ಅವರು ಪರಮಾನಂದಭರಿತರಾದರು. ಆ ನಕ್ಷತ್ರ ಅವರ ಮುಂದೆ ಮುಂದೆ ಸಾಗುತ್ತಾ ಮಗು ಇದ್ದ ಸ್ಥಳದ ಮೇಲೆ ಬಂದು ನಿಂತುಬಿಟ್ಟಿತು.</verse>
				<verse number="11">ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು.</verse>
				<verse number="12">ಹೆರೋದನ ಬಳಿಗೆ ಹಿಂದಿರುಗಬಾರದೆಂದು ಕನಸಿನಲ್ಲಿ ದೈವಾಜ್ಞೆಯಾದ್ದರಿಂದ, ಅವರು ಬೇರೆ ಮಾರ್ಗವಾಗಿ ತಮ್ಮ ದೇಶಕ್ಕೆ ಮರಳಿದರು.</verse>
				<verse number="13">ಜ್ಯೋತಿಷಿಗಳು ಹೊರಟುಹೋದ ಮೇಲೆ ದೇವದೂತನು ಜೋಸೆಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು. ನಾನು ಪುನಃ ಹೇಳುವ ತನಕ ಅಲ್ಲೇ ಇರು,” ಎಂದನು.</verse>
				<verse number="14">ಅದರಂತೆ ಜೋಸೆಫನು ಕೂಡಲೇ ಎದ್ದು ಮಗುವನ್ನೂ ತಾಯಿಯನ್ನೂ ರಾತ್ರೋರಾತ್ರಿಯಲ್ಲೇ ಕರೆದುಕೊಂಡು ಈಜಿಪ್ಟಿಗೆ ತೆರಳಿದನು.</verse>
				<verse number="15">ಹೆರೋದನು ಸಾಯುವ ತನಕ ಅಲ್ಲೇ ಇದ್ದನು. ಈ ಪ್ರಕಾರ, “ಈಜಿಪ್ಟ್ ದೇಶದಿಂದ ನನ್ನ ಕುಮಾರನನ್ನು ಕರೆದೆನು” ಎಂದು ಪ್ರವಾದಿಯ ಮುಖಾಂತರ ಸರ್ವೇಶ್ವರನು ಹೇಳಿದ್ದ ಪ್ರವಚನ ಈಡೇರಿತು.</verse>
				<verse number="16">ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.</verse>
				<verse number="17">“ಕೇಳಿಬರುತಿದೆ ರಮಾ ಊರಿನೊಳು ರೋದನ, ಗೋಳಾಟ, ಅಘೋರ ಆಕ್ರಂದನ; ಕಳೆದುಕೊಂಡ ಮಕ್ಕಳಿಗಾಗಿ ಗೋಳಿಡುತಿಹಳು ರಾಖೇಲಳು ಇನ್ನಿಲ್ಲದವುಗಳಿಗಾಗಿ ಉಪಶಮನ ಒಲ್ಲೆನೆನುತಿಹಳು,”</verse>
				<verse number="18">ಪ್ರವಾದಿ ಯೆರೆಮೀಯನ ಈ ಪ್ರವಚನ ಅಂದು ಸತ್ಯವಾಯಿತು.</verse>
				<verse number="19">ಹೆರೋದನು ಸತ್ತುಹೋದನು. ಆಗ ಈಜಿಪ್ಟಿನಲ್ಲಿ ಜೋಸೆಫನಿಗೆ ದೇವದೂತನು ಕನಸಿನಲ್ಲಿ ಕಾಣಿಸಿಕೊಂಡು,</verse>
				<verse number="20">“ಏಳು, ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಇಸ್ರಯೇಲ್ ದೇಶಕ್ಕೆ ಹಿಂದಿರುಗು; ಮಗುವನ್ನು ಕೊಲ್ಲಬೇಕೆಂದಿದ್ದವರು ಸತ್ತುಹೋದರು,” ಎಂದು ತಿಳಿಸಿದನು.</verse>
				<verse number="21">ಜೋಸೆಫನು ಎದ್ದು ತಾಯಿಯನ್ನೂ ಮಗುವನ್ನೂ ಕರೆದುಕೊಂಡು ಇಸ್ರಯೇಲ್ ದೇಶಕ್ಕೆ ಬಂದನು.</verse>
				<verse number="22">ಆದರೆ ಹೆರೋದನ ಮಗ ಅರ್ಖೆಲಾಯನು ತಂದೆಯ ಬದಲಿಗೆ ಜುದೇಯ ಪ್ರಾಂತ್ಯವನ್ನು ಆಳುತ್ತಿದ್ದಾನೆಂದು ಕೇಳಿ ಜೋಸೆಫನು ಅಲ್ಲಿಗೆ ಹೋಗಲು ಅಂಜಿದನು. ಕನಸಿನಲ್ಲಿ ತಾನು ಪಡೆದ ಆದೇಶದ ಪ್ರಕಾರ ಗಲಿಲೇಯ ಪ್ರಾಂತ್ಯಕ್ಕೆ ತೆರಳಿದನು.</verse>
				<verse number="23">ಅಲ್ಲಿರುವ ನಜರೇತ್ ಊರನ್ನು ಸೇರಿ ವಾಸಮಾಡಿದನು. ಹೀಗೆ, “ಆತನನ್ನು ನಜರೇತಿನವನೆಂದು ಕರೆಯುವರು” ಎಂಬ ಪ್ರವಚನ ನೆರವೇರಿತು.</verse>
			</chapter>
			<chapter number="3">
				<verse number="1">ಆ ಕಾಲದಲ್ಲಿ ಸ್ನಾನಿಕ ಯೊವಾನ್ನನು ಜುದೇಯ ಪ್ರಾಂತ್ಯದ ಬೆಂಗಾಡಿಗೆ ಹೋಗಿ ಬೋಧನೆಮಾಡಲು ಪ್ರಾರಂಭಿಸಿದನು.</verse>
				<verse number="2">“ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯವು ಸಮೀಪಿಸಿತು,” ಎಂದು ಸಾರಿ ಹೇಳುತ್ತಾ ಬಂದನು.</verse>
				<verse number="3">“ಸರ್ವೇಶ್ವರನಿಗೆ ಮಾರ್ಗವನ್ನು ನೇರಪಡಿಸಿರಿ, ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ, ಎಂದು ಬೆಂಗಾಡಿನಲ್ಲೊಬ್ಬನು ಘೋಷಿಸುತ್ತಿದ್ದಾನೆ,” ಎಂದಾಗ ಪ್ರವಾದಿ ಯೆಶಾಯನು ಸೂಚಿಸಿದ ವ್ಯಕ್ತಿ ಈತನೇ.</verse>
				<verse number="4">ಒಂಟೆ ತುಪ್ಪಟದ ಹೊದಿಕೆ, ಸೊಂಟದಲ್ಲಿ ತೊಗಲಿನ ನಡುಕಟ್ಟು - ಇವೇ ಈತನ ಉಡುಗೆ. ಮಿಡತೆ ಮತ್ತು ಕಾಡುಜೇನು ಇವೇ ಈತನ ಆಹಾರ.</verse>
				<verse number="5">ಜನರು ಜೆರುಸಲೇಮಿನಿಂದಲೂ ಇಡೀ ಜುದೇಯ ಪ್ರಾಂತ್ಯದಿಂದಲೂ ಜೋರ್ಡನ್ ನದಿಯ ಸುತ್ತಮುತ್ತಲಿನ ಪ್ರದೇಶಗಳಿಂದಲೂ ಈತನ ಬಳಿಗೆ ಬರುತ್ತಿದ್ದರು;</verse>
				<verse number="6">ತಮ್ಮ ತಮ್ಮ ಪಾಪಗಳನ್ನು ಒಪ್ಪಿಕೊಳ್ಳುತ್ತಾ ಜೋರ್ಡನ್ ನದಿಯಲ್ಲಿ ಈತನಿಂದ ಸ್ನಾನದೀಕ್ಷೆಯನ್ನು ಪಡೆಯುತ್ತಿದ್ದರು.</verse>
				<verse number="7">ಫರಿಸಾಯರಲ್ಲೂ ಸದ್ದುಕಾಯರಲ್ಲೂ ಅನೇಕರು ತನ್ನಿಂದ ಸ್ನಾನದೀಕ್ಷೆ ಪಡೆಯಲು ಬರುವುದನ್ನು ಯೊವಾನ್ನನು ನೋಡಿದನು. ಅವರನ್ನು ಉದ್ದೇಶಿಸಿ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆ ಕೊಟ್ಟವರಾರು?</verse>
				<verse number="8">ನೀವು ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ.</verse>
				<verse number="9">‘ಅಬ್ರಹಾಮನೇ ನಮ್ಮ ಪಿತಾಮಹ’ ಎಂದು ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತವಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.</verse>
				<verse number="10">ಈಗಾಗಲೇ ಮರದ ಬುಡಕ್ಕೆ ಕೊಡಲಿ ಬಿದ್ದಿದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು.</verse>
				<verse number="11">ಹೃದಯ ಪರಿವರ್ತನೆಯ ಗುರುತಾಗಿ ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆ ನನ್ನ ನಂತರ ಬರುವ ಒಬ್ಬರು ನಿಮಗೆ ಪವಿತ್ರಾತ್ಮ ಹಾಗೂ ಅಗ್ನಿಯಿಂದ ದೀಕ್ಷಾಸ್ನಾನ ಕೊಡುವರು. ಅವರು ನನಗಿಂತಲೂ ಶಕ್ತರು. ಅವರ ಪಾದರಕ್ಷೆಗಳನ್ನು ಹೊರಲು ಸಹ ನಾನು ಅರ್ಹನಲ್ಲ.</verse>
				<verse number="12">ಅವರ ಕೈಯಲ್ಲಿ ಮೊರವಿದೆ; ತಮ್ಮ ಕಣದಲ್ಲಿಯ ರಾಶಿಯನ್ನು ತೂರುವರು. ಗಟ್ಟಿಕಾಳನ್ನು ಮಾತ್ರ ಕಣಜದಲ್ಲಿ ತುಂಬುವರು; ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಎಚ್ಚರಿಸಿದನು.</verse>
				<verse number="13">ಯೊವಾನ್ನನಿಂದ ಸ್ನಾನದೀಕ್ಷೆ ಪಡೆಯಲು ಯೇಸುಸ್ವಾಮಿ ಗಲಿಲೇಯದಿಂದ ಹೊರಟು ಜೋರ್ಡನ್ ನದಿಯ ಬಳಿಗೆ ಬಂದರು. ಯೊವಾನ್ನನು ಅವರನ್ನು ತಡೆಯಲೆತ್ನಿಸಿದನು.</verse>
				<verse number="14">“ನಾನೇ ನಿಮ್ಮಿಂದ ದೀಕ್ಷಾಸ್ನಾನ ಪಡೆಯಬೇಕಾಗಿರುವಲ್ಲಿ ನೀವು ನನ್ನ ಬಳಿಗೆ ಬರುವುದೇ?’ಎಂದನು.</verse>
				<verse number="15">ಆದರೆ ಯೇಸು, “ಸದ್ಯಕ್ಕೆ ತಡೆಯದಿರು; ನಾವು ದೈವನಿಯಮಕ್ಕೆ ತಲೆಬಾಗುವುದು ಒಳಿತು,” ಎಂದರು. ಯೊವಾನ್ನನು ಅದಕ್ಕೆ ಸಮ್ಮತಿಸಿದನು.</verse>
				<verse number="16">ಯೇಸು ದೀಕ್ಷಾಸ್ನಾನ ಪಡೆದು ನೀರಿನಿಂದ ಮೇಲಕ್ಕೆ ಬಂದದ್ದೇ ಆಕಾಶವು ಫಕ್ಕನೆ ತೆರೆಯಿತು. ದೇವರಾತ್ಮ ಪಾರಿವಾಳದ ರೂಪದಲ್ಲಿ ತಮ್ಮ ಮೇಲೆ ಇಳಿದುಬಂದು ನೆಲಸುವುದನ್ನು ಕಂಡರು.</verse>
				<verse number="17">ಆಗ ಆಕಾಶದಿಂದ, “ಇವನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.</verse>
			</chapter>
			<chapter number="4">
				<verse number="1">ಯೇಸುಸ್ವಾಮಿ ಪಿಶಾಚಿಯಿಂದ ಪರಿಶೋಧಿತರಾಗಲೆಂದು ಪವಿತ್ರಾತ್ಮ ಅವರನ್ನು ಬೆಂಗಾಡಿಗೆ ಕರೆದೊಯ್ದರು.</verse>
				<verse number="2">ಅಲ್ಲಿ ಯೇಸು ನಲವತ್ತು ದಿನ ಹಗಲಿರುಳೂ ಉಪವಾಸವಿದ್ದರು. ಅನಂತರ ಅವರಿಗೆ ಬಹಳ ಹಸಿವಾಯಿತು.</verse>
				<verse number="3">ಆಗ ಶೋಧಕನು ಬಂದು, “ನೀನು ದೇವರ ಪುತ್ರನೆಂಬುದು ಸತ್ಯವಾದರೆ, ಈ ಕಲ್ಲುಗಳು ರೊಟ್ಟಿಗಳಾಗಲೆಂದು ಆಜ್ಞೆಮಾಡು,” ಎಂದನು.</verse>
				<verse number="4">ಅದಕ್ಕೆ ಯೇಸುಸ್ವಾಮಿ, “ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ, ‘ಮಾನವನು ಜೀವಿಸುವುದು ಆಹಾರದಿಂದ ಮಾತ್ರವಲ್ಲ; ದೇವರಾಡುವ ಪ್ರತಿಯೊಂದು ನುಡಿಯಿಂದ’,” ಎಂದರು.</verse>
				<verse number="5">ಬಳಿಕ ಪಿಶಾಚಿ ಅವರನ್ನು ಪವಿತ್ರ ನಗರಕ್ಕೆ ಅಂದರೆ ಜೆರುಸಲೇಮಿಗೆ ಕರೆದೊಯ್ದು ಮಹಾದೇವಾಲಯದ ಗೋಪುರದ ತುದಿಯ ಮೇಲೆ ನಿಲ್ಲಿಸಿ,</verse>
				<verse number="6">“ನೀನು ದೇವರ ಪುತ್ರನೆಂಬುದು ಸತ್ಯವಾದರೆ ಕೆಳಕ್ಕೆ ಧುಮುಕು. ಏಕೆಂದರೆ, ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ, ‘ದೇವರೇ ತಮ್ಮ ದೂತರಿಗೆ ಆಜ್ಞೆಮಾಡುವರು’ ಮತ್ತು ‘ಇವರು ನಿನ್ನ ಕಾಲುಗಳು ಕಲ್ಲುಗಳಿಗೆ ತಾಕದಂತೆ ನಿನ್ನನ್ನು ಕೈಗಳಲ್ಲಿ ಆತುಕೊಳ್ಳುವರು’,” ಎಂದಿತು.</verse>
				<verse number="7">ಅದಕ್ಕೆ ಯೇಸು, “ ‘ನಿನ್ನ ದೇವರು ಸರ್ವೇಶ್ವರ; ನೀನು ಅವರನ್ನು ಪರೀಕ್ಷಿಸಬಾರದು’, ಎಂದೂ ಸಹ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.</verse>
				<verse number="8">ಅನಂತರ ಪಿಶಾಚಿ ಯೇಸುವನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕೊಂಡೊಯ್ದು, ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ತೋರಿಸಿತು.</verse>
				<verse number="9">“ನೀನು ನನಗೆ ಅಡ್ಡಬಿದ್ದು ಆರಾಧಿಸುವೆಯಾದರೆ ಇವೆಲ್ಲವನ್ನು ನಿನಗೆ ಕೊಡಬಲ್ಲೆ,” ಎಂದಿತು.</verse>
				<verse number="10">ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.</verse>
				<verse number="11">ಆಗ ಪಿಶಾಚಿ ಯೇಸುವನ್ನು ಬಿಟ್ಟು ತೊಲಗಿತು. ದೇವದೂತರು ಬಂದು ಅವರನ್ನು ಉಪಚರಿಸಿದರು.</verse>
				<verse number="12">ಯೊವಾನ್ನನು ಬಂಧಿತನಾದನೆಂದು ಯೇಸುಸ್ವಾಮಿ ಕೇಳಿ, ಆ ಪ್ರಾಂತ್ಯವನ್ನು ಬಿಟ್ಟು ಗಲಿಲೇಯಕ್ಕೆ ಹೊರಟುಹೋದರು.</verse>
				<verse number="13">ನಜರೇತ್ ಊರಿನಲ್ಲಿ ತಂಗದೆ ಗಲಿಲೇಯ ಸರೋವರದ ಸಮೀಪದಲ್ಲಿರುವ ಕಫೆರ್ನವುಮ್ ಎಂಬ ಊರಿನಲ್ಲಿ ವಾಸಮಾಡಿದರು.</verse>
				<verse number="14">ಇದು ಜೆಬುಲೋನ್ ಹಾಗೂ ನೆಫ್ತಲೀಮ್ ನಾಡುಗಳ ಸರಹದ್ದಿನಲ್ಲಿದೆ.</verse>
				<verse number="15">ಹೀಗೆ: “ಜೆಬುಲೋನ್ ನಾಡೇ, ನೆಫ್ತಲೀಮ್ ನಾಡೇ, ಸರೋವರದ ಹತ್ತಿರವಿರುವ ಹಾದಿಬೀದಿಯೇ, ಜೋರ್ಡನಿನ ಹೊರವಲಯವೇ,</verse>
				<verse number="16">ಕಾರ್ಗತ್ತಲಲಿ ವಾಸಿಸುವವರಿಗೆ ದಿವ್ಯಜ್ಯೋತಿಯೊಂದು ಕಾಣಿಸಿತು. ಮರಣಛಾಯೆ ಕವಿದ ನಾಡಿಗರಿಗೆ ಅರುಣೋದಯವಾಯಿತು,” ಎಂದು ನುಡಿದ ಪ್ರವಾದಿ ಯೆಶಾಯನ ವಚನಗಳು ಈಡೇರಿದವು.</verse>
				<verse number="17">ಅಂದಿನಿಂದ ಯೇಸು, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿರಿ, ದೇವರಿಗೆ ಅಭಿಮುಖರಾಗಿರಿ, ಸ್ವರ್ಗಸಾಮ್ರಾಜ್ಯ ಸಮೀಪಿಸಿತು,” ಎಂಬ ಸಂದೇಶವನ್ನು ಬೋಧಿಸತೊಡಗಿದರು.</verse>
				<verse number="18">ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ನಡೆದುಹೋಗುತ್ತಿದ್ದರು. ಆಗ ಇಬ್ಬರು ಸಹೋದರರನ್ನು ಕಂಡರು. ಇವರೇ ‘ಪೇತ್ರ’ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ. ಬೆಸ್ತರಾದ ಇವರು ಸರೋವರದಲ್ಲಿ ಬಲೆ ಬೀಸುತ್ತಾ ಇದ್ದರು.</verse>
				<verse number="19">“ನನ್ನನ್ನು ಹಿಂಬಾಲಿಸಿ ಬನ್ನಿ. ನಿಮ್ಮನ್ನು ಮನುಷ್ಯರನ್ನೇ ಹಿಡಿಯುವವರನ್ನಾಗಿ ಮಾಡುವೆನು,” ಎಂದು ಹೇಳಿ ಯೇಸು ಅವರನ್ನು ಕರೆದರು.</verse>
				<verse number="20">ತಕ್ಷಣವೇ, ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.</verse>
				<verse number="21">ಅಲ್ಲಿಂದ ಮುಂದಕ್ಕೆ ಹೋಗುತ್ತಿದ್ದಾಗ ಯೇಸು ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನ ಎಂಬ ಇನ್ನಿಬ್ಬರು ಸಹೋದರರನ್ನು ಕಂಡರು. ಇವರು ತಮ್ಮ ತಂದೆ ಜೆಬೆದಾಯನೊಡನೆ ದೋಣಿಯಲ್ಲಿ ಬಲೆಗಳನ್ನು ಸರಿಪಡಿಸುತ್ತಿದ್ದರು. ಯೇಸು ಇವರನ್ನೂ ಕರೆದರು.</verse>
				<verse number="22">ಕೂಡಲೇ ಅವರು ದೋಣಿಯನ್ನೂ ತಮ್ಮ ತಂದೆಯನ್ನೂ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.</verse>
				<verse number="23">ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಉಪದೇಶಮಾಡುತ್ತಿದ್ದರು. ದೈವರಾಜ್ಯದ ಸಂದೇಶವನ್ನು ಪ್ರಬೋಧಿಸುತ್ತಿದ್ದರು. ಜನರ ಎಲ್ಲಾ ತರಹದ ರೋಗರುಜಿನಗಳನ್ನೂ ಬೇನೆ ಬವಣೆಗಳನ್ನೂ ಗುಣಪಡಿಸುತ್ತಿದ್ದರು.</verse>
				<verse number="24">ಅವರ ಕೀರ್ತಿ ಸಿರಿಯಾ ದೇಶದಲ್ಲೆಲ್ಲಾ ಹಬ್ಬಿತು. ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯು ಪೀಡಿತರನ್ನೂ ನಾನಾ ತರಹದ ವ್ಯಾಧಿ ಹಾಗೂ ವೇದನೆಯಿಂದ ನರಳುತ್ತಿದ್ದ ಎಲ್ಲ ರೋಗಿಗಳನ್ನೂ ಅವರ ಬಳಿಗೆ ಕರೆತಂದರು. ಯೇಸು ಅವರೆಲ್ಲರನ್ನು ಸ್ವಸ್ಥಪಡಿಸಿದರು.</verse>
				<verse number="25">ಗಲಿಲೇಯ, ದೆಕಪೊಲಿ, ಜೆರುಸಲೇಮ್, ಜುದೇಯ ಎಂಬ ಸ್ಥಳಗಳಿಂದಲೂ ಜೋರ್ಡನ್ ನದಿಯ ಆಚೆಕಡೆಯಿಂದಲೂ ಜನರು ತಂಡೋಪತಂಡವಾಗಿ ಬಂದು ಯೇಸುವನ್ನು ಹಿಂಬಾಲಿಸಿದರು.</verse>
			</chapter>
			<chapter number="5">
				<verse number="1">ಜನರ ದೊಡ್ಡ ಗುಂಪನ್ನು ಕಂಡು ಯೇಸುಸ್ವಾಮಿ ಒಂದು ಬೆಟ್ಟವನ್ನು ಹತ್ತಿ ಕುಳಿತುಕೊಂಡರು. ಅವರ ಶಿಷ್ಯರು ಸುತ್ತಲೂ ನೆರೆದರು.</verse>
				<verse number="2">ಆಗ ಯೇಸು ಇಂತೆಂದು ಪ್ರಬೋಧಿಸಿದರು.</verse>
				<verse number="3">“ಪಾರಮಾರ್ಥಿಕವಾಗಿ ಬಡವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.</verse>
				<verse number="4">ದುಃಖಿಗಳು ಭಾಗ್ಯವಂತರು; ದೇವರು ಅವರನ್ನು ಸಂತೈಸುವರು.</verse>
				<verse number="5">ವಿನಯಶೀಲರು ಭಾಗ್ಯವಂತರು; ದೇವರ ವಾಗ್ದತ್ತ ನಾಡಿಗೆ ಬಾಧ್ಯಸ್ಥರು ಅವರು.</verse>
				<verse number="6">ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು.</verse>
				<verse number="7">ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು.</verse>
				<verse number="8">ನಿರ್ಮಲ ಹೃದಯಿಗಳು ಭಾಗ್ಯವಂತರು; ಅವರು ದೇವರನ್ನು ಕಾಣುವರು.</verse>
				<verse number="9">ಶಾಂತಿಗಾಗಿ ಶ್ರಮಿಸುವವರು ಭಾಗ್ಯವಂತರು; ಅವರು ದೇವರ ಮಕ್ಕಳೆನಿಸಿಕೊಳ್ಳುವರು.</verse>
				<verse number="10">ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ತಾಳುವವರು ಭಾಗ್ಯವಂತರು; ಸ್ವರ್ಗಸಾಮ್ರಾಜ್ಯ ಅವರದು.”</verse>
				<verse number="11">“ನನ್ನ ಶಿಷ್ಯರು ನೀವಾದ್ದರಿಂದ ಜನರು ನಿಮ್ಮನ್ನು ಧಿಕ್ಕರಿಸುವರು, ಹಿಂಸಿಸುವರು, ಅನ್ಯಾಯವಾಗಿ ಇಲ್ಲಸಲ್ಲದ್ದನ್ನು ನಿಮ್ಮ ಮೇಲೆ ಹೊರಿಸುವರು; ಆಗ ನೀವು ಭಾಗ್ಯವಂತರು.</verse>
				<verse number="12">ಅದಕ್ಕಾಗಿ ಹರ್ಷಿಸಿ ಆನಂದಪಡಿ; ಏಕೆಂದರೆ ಸ್ವರ್ಗದಲ್ಲಿ ನಿಮಗೆ ಸಿಗುವ ಪ್ರತಿಫಲ ಹಿರಿದು, ನಿಮಗಿಂತ ಮೊದಲಿದ್ದ ಪ್ರವಾದಿಗಳನ್ನೂ ಜನರು ಹೀಗೆಯೇ ಚಿತ್ರಹಿಂಸೆಗೆ ಒಳಪಡಿಸಿದರು.”</verse>
				<verse number="13">“ಈ ಧರೆಗೆ ನೀವೇ ಉಪ್ಪು; ಉಪ್ಪೇ ಸಪ್ಪೆಯಾಗಿಬಿಟ್ಟರೆ ಅದಕ್ಕೆ ಇನ್ನಾವುದರಿಂದ ಪುನಃ ರುಚಿಬಂದೀತು? ಇನ್ನು ಅದು ಕೆಲಸಕ್ಕೆ ಬಾರದ ವಸ್ತು. ಜನರು ಅದನ್ನು ಆಚೆ ಬಿಸಾಡುತ್ತಾರೆ. ದಾರಿಗರು ಅದನ್ನು ತುಳಿದುಬಿಡುತ್ತಾರಷ್ಟೆ.”</verse>
				<verse number="14">“ಜಗತ್ತಿಗೆ ನೀವೇ ಜ್ಯೋತಿ. ಬೆಟ್ಟದ ಮೇಲಿನ ಪಟ್ಟಣವನ್ನು ಮುಚ್ಚಿಡಲಾಗದು.</verse>
				<verse number="15">ಅಂತೆಯೇ ಯಾರೂ ದೀಪವನ್ನು ಹಚ್ಚಿ ಬಟ್ಟಲ ಕೆಳಗೆ ಬಚ್ಚಿಡುವುದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವ ಎಲ್ಲರಿಗೆ ಬೆಳಕನ್ನು ಕೊಡುತ್ತದೆ.</verse>
				<verse number="16">ಅದೇ ರೀತಿ ನಿಮ್ಮ ಜ್ಯೋತಿ ಜನರ ಮುಂದೆ ಬೆಳಗಲಿ; ಹೀಗೆ ಅವರು ನಿಮ್ಮ ಸತ್ಕಾರ್ಯಗಳನ್ನು ಕಂಡು ಸ್ವರ್ಗದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡಲಿ.”</verse>
				<verse number="17">“ಮೋಶೆಯ ಧರ್ಮಶಾಸ್ತ್ರವನ್ನಾಗಲಿ, ಪ್ರವಾದಿಗಳ ಪ್ರವಚನಗಳನ್ನಾಗಲಿ ರದ್ದುಮಾಡಲು ನಾನು ಬಂದೆನೆಂದು ತಿಳಿಯಬೇಡಿ. ರದ್ದುಮಾಡಲು ಅಲ್ಲ, ಅವುಗಳನ್ನು ಸಿದ್ಧಿಗೆ ತರಲು ಬಂದಿದ್ದೇನೆ.</verse>
				<verse number="18">ಭೂಮ್ಯಾಕಾಶಗಳು ಉಳಿದಿರುವ ತನಕ ಧರ್ಮಶಾಸ್ತ್ರವೆಲ್ಲ ನೆರವೇರುವುದೇ ಹೊರತು ಅದರಲ್ಲಿ ಒಂದು ಚಿಕ್ಕ ಅಕ್ಷರವಾಗಲಿ, ಚುಕ್ಕೆಯಾಗಲಿ ನಿರರ್ಥಕವಾಗದೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.</verse>
				<verse number="19">ಹೀಗಿರುವಲ್ಲಿ, ಅದರ ಆಜ್ಞೆಗಳಲ್ಲಿ ಅತಿ ಚಿಕ್ಕದೊಂದನ್ನು ಮೀರುವವನು, ಮೀರುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಅತ್ಯಲ್ಪನೆಂದು ಪರಿಗಣಿತನಾಗುವನು; ಧರ್ಮಶಾಸ್ತ್ರವನ್ನು ಪಾಲಿಸುವವನು, ಪಾಲಿಸುವಂತೆ ಜನರಿಗೆ ಬೋಧಿಸುವವನು, ಸ್ವರ್ಗಸಾಮ್ರಾಜ್ಯದಲ್ಲಿ ಮಹಾತ್ಮನೆಂದು ಪರಿಗಣಿತನಾಗುವನು.</verse>
				<verse number="20">ಧರ್ಮಶಾಸ್ತ್ರಿಗಳ ಹಾಗೂ ಫರಿಸಾಯರ ಧರ್ಮನಿಷ್ಠೆಗಿಂತ ನಿಮ್ಮ ಧರ್ಮನಿಷ್ಠೆ ಉತ್ತಮವಾಗದ ಹೊರತು ನೀವು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸಲಾರಿರಿ ಎಂಬುದು ನಿಶ್ಚಯ.”</verse>
				<verse number="21">“ ‘ನರಹತ್ಯೆ ಮಾಡಬೇಡ; ನರಹತ್ಯೆ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನು’ ಎಂದು ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.</verse>
				<verse number="22">ಆದರೆ ನಾನೀಗ ನಿಮಗೆ ಹೇಳುತ್ತೇನೆ, ಕೇಳಿ; ತನ್ನ ಸೋದರನ ಮೇಲೆ (ನಿಷ್ಕಾರಣವಾಗಿ) ಕೋಪಗೊಳ್ಳುವ ಪ್ರತಿಯೊಬ್ಬನೂ ನ್ಯಾಯತೀರ್ಪಿಗೆ ಈಡಾಗುವನು; ತನ್ನ ಸೋದರನನ್ನು ತುಚ್ಛೀಕರಿಸುವವನು ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು; ‘ಮೂರ್ಖ’ ಎಂದು ಮೂದಲಿಸುವವನು ನರಕಾಗ್ನಿಗೆ ಗುರಿಯಾಗುವನು.</verse>
				<verse number="23">ಆದಕಾರಣ, ಬಲಿಪೀಠದ ಮುಂದೆ ದೇವರಿಗೆ ಕಾಣಿಕೆಯನ್ನು ಅರ್ಪಿಸಲಿರುವಾಗ, ನಿನ್ನ ಸೋದರನಿಗೆ ನಿನ್ನ ಮೇಲೆ ಏನೋ ಮನಸ್ತಾಪವಿದೆ ಎಂಬುದು ನಿನ್ನ ನೆನಪಿಗೆ ಬಂದರೆ,</verse>
				<verse number="24">ನಿನ್ನ ಕಾಣಿಕೆಯನ್ನು ಆ ಬಲಿಪೀಠದ ಮುಂದೆಯೇ ಇಟ್ಟುಬಿಡು. ಮೊದಲು ಹೋಗಿ ನಿನ್ನ ಸೋದರನೊಡನೆ ಸಮಾಧಾನಮಾಡಿಕೊ’ ಅನಂತರ ಬಂದು ನಿನ್ನ ಕಾಣಿಕೆಯನ್ನು ಒಪ್ಪಿಸು.”</verse>
				<verse number="25">“ನಿನ್ನ ಎದುರಾಳಿ ನಿನ್ನನ್ನು ನ್ಯಾಯಸ್ಥಾನಕ್ಕೆ ಎಳೆಯುವಾಗ ಮಾರ್ಗಮಧ್ಯದಲ್ಲೇ ಅವನೊಡನೆ ಬೇಗ ಸಮಾಧಾನಮಾಡಿಕೊ. ಇಲ್ಲದಿದ್ದರೆ, ಅವನು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಬಹುದು. ನ್ಯಾಯಾಧಿಪತಿ ನಿನ್ನನ್ನು ಪೊಲೀಸರ ವಶಕ್ಕೆ ಬಿಡಬಹುದು. ಅನಂತರ ನಿನಗೆ ಸೆರೆವಾಸ ಪ್ರಾಪ್ತವಾದೀತು!</verse>
				<verse number="26">ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಬಿಡಿಕಾಸನ್ನೂ ಬಿಡದೆ ಎಲ್ಲವನ್ನೂ ತೆರಬೇಕಾಗುವುದು. ಇದನ್ನು ನೆನಪಿನಲ್ಲಿಡು.”</verse>
				<verse number="27">“ವ್ಯಭಿಚಾರ ಮಾಡಕೂಡದು ಎಂಬ ನಿಯಮವನ್ನು ನೀವು ಕೇಳಿದ್ದೀರಿ;</verse>
				<verse number="28">ಆದರೆ ನಾನು ಹೇಳುತ್ತೇನೆ, ಕೇಳಿ; ಪರಸ್ತ್ರೀಯನ್ನು ಕಾಮದೃಷ್ಟಿಯಿಂದ ನೋಡುವ ಪ್ರತಿಯೊಬ್ಬನೂ ತನ್ನ ಹೃದಯದಲ್ಲಿ ಆಕೆಯೊಡನೆ ಆಗಲೇ ವ್ಯಭಿಚಾರ ಮಾಡಿದವನೇ ಆಗುತ್ತಾನೆ.</verse>
				<verse number="29">ನಿನ್ನ ಬಲಗಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತೆಸೆದುಬಿಡು; ನಿನ್ನ ಇಡೀ ದೇಹ ನರಕಕ್ಕೆ ತುತ್ತಾಗುವುದಕ್ಕಿಂತ ನಿನ್ನ ಒಂದು ಅಂಗ ನಾಶವಾಗುವುದೇ ಲೇಸು.</verse>
				<verse number="30">ನಿನ್ನ ಬಲಗೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಬಿಸಾಡಿಬಿಡು; ನಿನ್ನ ಇಡೀ ದೇಹ ನರಕದ ಪಾಲಾಗುವುದಕ್ಕಿಂತ ಒಂದು ಅವಯವ ನಾಶವಾಗುವುದು ಎಷ್ಟೋ ಮೇಲು.”</verse>
				<verse number="31">“ಇದಲ್ಲದೆ, ‘ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ವಿವಾಹ ವಿಚ್ಛೇದನ ಪತ್ರವನ್ನು ಅವಳಿಗೆ ಕೊಡಲಿ,’ ಎಂದು ವಿಧಿಸಲಾಗಿದೆ.</verse>
				<verse number="32">ಆದರೆ ನಾನೀಗ ನಿಮಗೆ ಹೇಳುತ್ತೇನೆ ಕೇಳಿ; ತನ್ನ ಹೆಂಡತಿಯ ದುರ್ನಡತೆಯ ಕಾರಣದಿಂದಲ್ಲದೆ, ಅವಳನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ; ಅಲ್ಲದೆ ಗಂಡಬಿಟ್ಟವಳನ್ನು ಮದುವೆಯಾಗುವವನು ಕೂಡ ವ್ಯಭಿಚಾರಿಯಾಗುತ್ತಾನೆ.”</verse>
				<verse number="33">“ಸುಳ್ಳಾಣೆಯಿಡಬೇಡ; ದೇವರಿಗೆ ಆಣೆಯಿಟ್ಟು ವಾಗ್ದಾನಮಾಡಿದಂತೆ ನಡೆದುಕೊಳ್ಳಲೇಬೇಕು’ ಎಂದು ಪೂರ್ವಿಕರಿಗೆ ಹೇಳಿದ್ದು ನಿಮಗೆ ತಿಳಿದೇ ಇದೆ.</verse>
				<verse number="34">ಈಗ ನಾನು ಹೇಳುವುದನ್ನು ಕೇಳಿ: ನೀವು ಆಣೆಯಿಡಲೇ ಬೇಡಿ. ಆಕಾಶದ ಮೇಲೆ ಆಣೆಯಿಡಬೇಡಿ, ಅದು ದೇವರ ಸಿಂಹಾಸನ;</verse>
				<verse number="35">ಭೂಮಿಯ ಮೇಲೆ ಆಣೆಯಿಡಬೇಡಿ, ಅದು ದೇವರ ಪಾದಪೀಠ; ಜೆರುಸಲೇಮಿನ ಮೇಲೆ ಆಣೆಯಿಡಬೇಡಿ, ಅದು ರಾಜಾಧಿರಾಜನ ಪಟ್ಟಣ;</verse>
				<verse number="36">ನಿಮ್ಮ ತಲೆಯ ಮೇಲೂ ಆಣೆಯಿಡಬೇಡಿ; ಹಾಗೆ ಆಣೆಯನ್ನಿಟ್ಟು ಅದರ ಒಂದು ಕೂದಲನ್ನಾದರೂ ಬೆಳ್ಳಗೆ ಅಥವಾ ಕಪ್ಪಗೆ ಮಾಡಲು ನಿಮ್ಮಿಂದಾಗದು.</verse>
				<verse number="37">ಹೌದಾದರೆ ಹೌದೆನ್ನಿ, ಅಲ್ಲವಾದರೆ ಅಲ್ಲವೆನ್ನಿ; ಇದಕ್ಕಿಂತ ಮಿಗಿಲಾದುದು ಪಿಶಾಚಿಯಿಂದ ಪ್ರೇರಿತವಾದುದು.”</verse>
				<verse number="38">“ ‘ಕಣ್ಣಿಗೆ ಪ್ರತಿಯಾಗಿ ಕಣ್ಣು, ಹಲ್ಲಿಗೆ ಬದಲಾಗಿ ಹಲ್ಲು’ ಎಂಬುದನ್ನು ನೀವು ಕೇಳಿದ್ದೀರಿ.</verse>
				<verse number="39">ಆದರೆ ನನ್ನ ಬೋಧೆ ಇದು; ನಿನಗೆ ಅಪಕಾರ ಮಾಡಿದವನಿಗೆ ಪ್ರತೀಕಾರ ಮಾಡಬೇಡ. ನಿನ್ನ ಬಲಗೆನ್ನೆಗೆ ಒಬ್ಬನು ಹೊಡೆದರೆ ಇನ್ನೊಂದು ಕೆನ್ನೆಯನ್ನೂ ಒಡ್ಡು.</verse>
				<verse number="40">ನಿನ್ನೊಡನೆ ವ್ಯಾಜ್ಯಮಾಡಿ ನಿನ್ನ ಒಳ ಅಂಗಿಯನ್ನು ಕಿತ್ತುಕೊಳ್ಳುವವನಿಗೆ ಹೊರ ಅಂಗಿಯನ್ನೂ ಕೊಟ್ಟುಬಿಡು.</verse>
				<verse number="41">ಯಾರಾದರೂ ಒಂದು ಕಿಲೊಮೀಟರ್ ದೂರ ಬಾ ಎಂದು ನಿನ್ನನ್ನು ಒತ್ತಾಯಪಡಿಸಿದರೆ ಅವನೊಡನೆ ಎರಡು ಕಿಲೊಮೀಟರ್ ಹೋಗು;</verse>
				<verse number="42">ಬೇಡಿಕೊಳ್ಳುವವನಿಗೆ ಕೊಡು. ಸಾಲ ಕೇಳಬಂದವನಿಂದ ಮುಖ ತಿರುಗಿಸಿಕೊಳ್ಳಬೇಡ.”</verse>
				<verse number="43">“ ‘ಮಿತ್ರರನ್ನು ಪ್ರೀತಿಸು, ಶತ್ರುವನ್ನು ದ್ವೇಷಿಸು’ ಎಂದು ಹೇಳಿರುವುದು ನಿಮಗೆ ತಿಳಿದೇ ಇದೆ.</verse>
				<verse number="44">ನಾನು ಹೇಳುವುದನ್ನು ಗಮನಿಸಿರಿ; ನಿಮ್ಮ ಶತ್ರುಗಳನ್ನು ಪ್ರೀತಿಸಿರಿ; ನಿಮ್ಮನ್ನು ಪೀಡಿಸುವವರಿಗಾಗಿ ಪ್ರಾರ್ಥಿಸಿರಿ.</verse>
				<verse number="45">ಇದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ನೀವು ಮಕ್ಕಳಾಗುವಿರಿ. ಅವರು ಸಜ್ಜನರ ಮೇಲೂ ದುರ್ಜನರ ಮೇಲೂ ತಮ್ಮ ಸೂರ್ಯನು ಉದಯಿಸುವಂತೆ ಮಾಡುತ್ತಾರೆ; ನೀತಿವಂತರ ಮೇಲೂ ಅನೀತಿವಂತರ ಮೇಲೂ ಮಳೆಗರೆಯುತ್ತಾರೆ.</verse>
				<verse number="46">ನಿಮ್ಮನ್ನು ಪ್ರೀತಿಸುವವರನ್ನು ಮಾತ್ರ ನೀವು ಪ್ರೀತಿಸಿದರೆ ಅದರಿಂದೇನು ಫಲ? ಸುಂಕ ವಸೂಲಿಮಾಡುವವರೂ ಹಾಗೆ ಮಾಡುವುದಿಲ್ಲವೇ?</verse>
				<verse number="47">ನಿಮ್ಮ ಮಿತ್ರರನ್ನು ಮಾತ್ರ ನೀವು ಗೌರವಿಸಿದರೆ ಅದರಲ್ಲೇನು ವಿಶೇಷ? ಅನ್ಯಜನರೂ ಹಾಗೆ ಮಾಡುತ್ತಾರಲ್ಲವೇ?</verse>
				<verse number="48">ಆದುದರಿಂದ ಸ್ವರ್ಗದಲ್ಲಿರುವ ನಿಮ್ಮ ತಂದೆ ಪರಿಪೂರ್ಣರಾಗಿರುವಂತೆ ನೀವೂ ಪರಿಪೂರ್ಣರಾಗಿರಿ.”</verse>
			</chapter>
			<chapter number="6">
				<verse number="1">“ಜನರಿಗೆ ತೋರಿಸಿಕೊಳ್ಳುವುದಕ್ಕಾಗಿ ನಿಮ್ಮ ಧಾರ್ಮಿಕ ಕಾರ್ಯಗಳನ್ನು ಅವರ ಎದುರಿಗೆ ಪ್ರದರ್ಶಿಸದಂತೆ ಎಚ್ಚರಿಕೆಯಿಂದಿರಿ. ಹಾಗೆ ಮಾಡಿದರೆ, ಸ್ವರ್ಗದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ದೊರಕದು.</verse>
				<verse number="2">ಅಂತೆಯೇ, ನೀನು ದಾನಧರ್ಮ ಮಾಡುವಾಗ ತುತೂರಿಯನ್ನು ಊದಿಸಬೇಡ. ಜನರ ಹೊಗಳಿಕೆಗಾಗಿ ಕಪಟಿಗಳು ಪ್ರಾರ್ಥನಾಮಂದಿರಗಳಲ್ಲೂ ಹಾದಿಬೀದಿಗಳಲ್ಲೂ ಹೀಗೆ ಪ್ರದರ್ಶನ ಮಾಡುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿದ್ದಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.</verse>
				<verse number="3">ಆದರೆ ನೀನು ದಾನಧರ್ಮಮಾಡುವಾಗ ನಿನ್ನ ಬಲಗೈ ಕೊಡುವುದು ನಿನ್ನ ಎಡಗೈಗೂ ತಿಳಿಯದ ಹಾಗೆ ಗೋಪ್ಯವಾಗಿರಲಿ.</verse>
				<verse number="4">ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.</verse>
				<verse number="5">“ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಮಾಡಬೇಡಿ. ಜನರು ತಮ್ಮನ್ನು ನೋಡಲೆಂದು ಪ್ರಾರ್ಥನಾ ಮಂದಿರಗಳಲ್ಲೂ ಬೀದಿಯ ಚೌಕಗಳಲ್ಲೂ ನಿಂತು ಪ್ರಾರ್ಥನೆ ಮಾಡಲು ಇಚ್ಛಿಸುತ್ತಾರೆ. ಅವರಿಗೆ ಬರಬೇಕಾದ ಪೂರ್ತಿ ಫಲ ಆಗಲೇ ಬಂದಾಯಿತೆಂಬುದು ನಿಮಗೆ ಚೆನ್ನಾಗಿ ತಿಳಿದಿರಲಿ.</verse>
				<verse number="6">ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೊಠಡಿಗೆ ಹೋಗು; ಬಾಗಿಲನ್ನು ಮುಚ್ಚು; ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ನಿನಗೆ ಪ್ರತಿಫಲವನ್ನು ಕೊಡುವರು.”</verse>
				<verse number="7">“ಪ್ರಾರ್ಥನೆ ಮಾಡುವಾಗ ಪರಕೀಯರಂತೆ ನಿರರ್ಥಕ ಪದಗಳನ್ನು ಪಿಸುಗುಟ್ಟಬೇಡ. ತಮ್ಮ ಪ್ರಾರ್ಥನೆ ದೀರ್ಘವಾದಷ್ಟೂ ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ.</verse>
				<verse number="8">ನೀವು ಅವರಂತೆ ಆಗಬೇಡಿ. ನಿಮ್ಮ ಅಗತ್ಯಗಳೇನೆಂದು ನೀವು ಕೇಳುವುದಕ್ಕೆ ಮೊದಲೇ ನಿಮ್ಮ ತಂದೆಗೆ ಗೊತ್ತಿದೆ.</verse>
				<verse number="9">ಆದುದರಿಂದ ಹೀಗೆಂದು ಪ್ರಾರ್ಥನೆಮಾಡಿ:</verse>
				<verse number="10">	‘ಸ್ವರ್ಗ ದಲ್ಲಿರುವ ಓ ನಮ್ಮ ತಂದೆಯೇ, ನಿಮ್ಮ ಪವಿತ್ರ ನಾಮ ಪೂಜಿತವಾಗಲಿ; ನಿಮ್ಮ ಸಾಮ್ರಾಜ್ಯ ಬರಲಿ; ನಿಮ್ಮ ಚಿತ್ತ ಸ್ವರ್ಗದಲ್ಲಿ ನೆರವೇರುವ ಪ್ರಕಾರ ಜಗತ್ತಿನಲ್ಲಿಯೂ ನೆರವೇರಲಿ.</verse>
				<verse number="11">ನಮ್ಮ ಅನುದಿನದ ಆಹಾರವನ್ನು ನಮಗಿಂದು ಕೊಡಿ.</verse>
				<verse number="12">	ನಮಗೆ ತಪ್ಪುಮಾಡಿದವರನ್ನು ನಾವು ಕ್ಷಮಿಸುವ ಪ್ರಕಾರ ನಾವು ಮಾಡಿದ ತಪ್ಪುಗಳನ್ನು ಕ್ಷಮಿಸಿ.</verse>
				<verse number="13">	ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’</verse>
				<verse number="14">“ಜನರ ತಪ್ಪುಗಳನ್ನು ನೀವು ಕ್ಷಮಿಸಿದರೆ ಸ್ವರ್ಗದಲ್ಲಿರುವ ನಿಮ್ಮ ತಂದೆ ನಿಮ್ಮನ್ನು ಕ್ಷಮಿಸುವರು.</verse>
				<verse number="15">ಜನರನ್ನು ನೀವು ಕ್ಷಮಿಸದಿದ್ದರೆ, ನಿಮ್ಮ ತಂದೆಯೂ ನಿಮ್ಮ ತಪ್ಪುಗಳನ್ನು ಕ್ಷಮಿಸರು.”</verse>
				<verse number="16">“ಉಪವಾಸ ಮಾಡುವಾಗ ಕಪಟಿಗಳಂತೆ ಮುಖ ಸಪ್ಪೆಮಾಡಬೇಡಿ. ಜನರ ಕಣ್ಣಿಗೆ ತಾವು ಉಪವಾಸಿಗಳೆಂದು ತೋರ್ಪಡಿಸಿಕೊಳ್ಳುವುದಕ್ಕಾಗಿ ಅವರು ಮುಖವನ್ನು ಬಾಡಿಸಿಕೊಳ್ಳುತ್ತಾರೆ. ಅವರಿಗೆ ಬರಬೇಕಾದ ಫಲ ಪೂರ್ತಿಯಾಗಿ ದೊರಕಿಯಾಯಿತೆಂದು ನಿಮಗೆ ಖಚಿತವಾಗಿ ಹೇಳುತ್ತೇನೆ.</verse>
				<verse number="17">ಆದರೆ ನೀನು ಉಪವಾಸ ಕೈಗೊಂಡಾಗ ಮುಖ ತೊಳೆದುಕೊ, ತಲೆಬಾಚಿಕೊ.</verse>
				<verse number="18">ಆಗ ಉಪವಾಸ ಮಾಡುವವನಂತೆ ನೀನು ಜನರಿಗೆ ಕಾಣಿಸಿಕೊಳ್ಳುವುದಿಲ್ಲ; ಅಂತರಂಗದಲ್ಲಿ ಇರುವ ನಿನ್ನ ತಂದೆಗೆ ಮಾತ್ರ ಕಾಣಿಸಿಕೊಳ್ಳುವೆ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆ ಅದಕ್ಕೆಲ್ಲ ಪ್ರತಿಫಲ ಕೊಡುವರು.”</verse>
				<verse number="19">“ಇಹಲೋಕದಲ್ಲಿ ಆಸ್ತಿಪಾಸ್ತಿಯನ್ನು ಶೇಖರಿಸಿಡಬೇಡಿ. ಇಲ್ಲಿ ತುಕ್ಕು ಹಿಡಿದೀತು; ನುಸಿ ಹೊಡೆದೀತು; ಕಳ್ಳರು ಕನ್ನ ಕೊರೆದು ಕದ್ದಾರು.</verse>
				<verse number="20">ನಿಮ್ಮ ಆಸ್ತಿಯನ್ನು ಸ್ವರ್ಗದಲ್ಲಿ ಕೂಡಿಸಿಡಿ. ಅಲ್ಲಿ ತುಕ್ಕು ಹಿಡಿಯದು. ನುಸಿ ಹೊಡೆಯದು, ಕಳ್ಳರು ಕನ್ನ ಕೊರೆದು ಕದಿಯರು.</verse>
				<verse number="21">ನಿನ್ನ ನಿಧಿ ಎಲ್ಲಿದೆಯೋ ಅಲ್ಲೇ ಇರುವುದು ನಿನ್ನ ಹೃದಯ.”</verse>
				<verse number="22">“ಕಣ್ಣೇ ದೇಹಕ್ಕೆ ದೀಪ. ನಿನ್ನ ಕಣ್ಣು ಸರಿಯಿದ್ದರೆ ದೇಹವೆಲ್ಲ ಕಾಂತಿಮಯವಾಗುವುದು. ಅದು ಕೆಟ್ಟಿದ್ದರೆ ನಿನ್ನ ದೇಹವೆಲ್ಲ ಕತ್ತಲೆಮಯವಾಗುವುದು.</verse>
				<verse number="23">ನಿನ್ನೊಳಗಿರುವ ಬೆಳಕೇ ಕತ್ತಲೆಯಾದಲ್ಲಿ ಅದೆಂತಹ ಕರಾಳ ಕತ್ತಲೆಯಾಗಿರಬಹುದು!”</verse>
				<verse number="24">“ಯಾರೂ ಇಬ್ಬರು ಯಜಮಾನರಿಗೆ ಜೀತಮಾಡಲಾಗದು. ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ, ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು.”</verse>
				<verse number="25">“ನಾನು ಹೇಳುವುದನ್ನು ಕೇಳಿ: ‘ಪ್ರಾಣಧಾರಣೆಗೆ ಏನು ಉಣ್ಣುವುದು, ಏನು ಕುಡಿಯುವುದು; ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ. ಊಟಕ್ಕಿಂತ ಪ್ರಾಣ ಉಡುಪಿಗಿಂತ ದೇಹ ಮೇಲಾದುದಲ್ಲವೆ?</verse>
				<verse number="26">ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ಗಮನಿಸಿ: ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ, ಕಣಜಗಳಲ್ಲಿ ಕೂಡಿಡುವುದೂ ಇಲ್ಲ. ಆದರೂ ಸ್ವರ್ಗದಲ್ಲಿರುವ ನಿಮ್ಮ ತಂದೆ ಅವುಗಳನ್ನು ಪೋಷಿಸುತ್ತಾರೆ. ಹಕ್ಕಿಗಳಿಗಿಂತ ನೀವು ಎಷ್ಟೋ ಮೇಲಾದವರಲ್ಲವೆ?</verse>
				<verse number="27">ಚಿಂತಿಸಿ, ಚಿಂತಿಸಿ ನಿಮ್ಮ ಜೀವನಾವಧಿಯನ್ನು ಕೊಂಚಕಾಲವಾದರೂ ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು?</verse>
				<verse number="28">ಉಡುಗೆತೊಡುಗೆಗಳ ಚಿಂತೆ ನಿಮಗೇಕೆ? ವನಕುಸುಮಗಳು ಬೆಳೆಯುವ ರೀತಿಯನ್ನು ಗಮನಿಸಿ ನೋಡಿ; ಅವು ದುಡಿಯುವುದಿಲ್ಲ, ನೂಲುವುದಿಲ್ಲ.</verse>
				<verse number="29">ಆದರೂ ಅರಸ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ ಈ ಕುಸುಮಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ.</verse>
				<verse number="30">ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೆ ದೇವರು ಹೀಗೆ ಉಡಿಸಿದರೆ, ನಿಮಗೆ ಮತ್ತಷ್ಟೂ ಮಾಡಲಾರರೇ?</verse>
				<verse number="31">ಆದುದರಿಂದ ತಿನ್ನಲು ಏನು? ಕುಡಿಯಲು ಏನು? ಉಡಲು ಏನು? ಎಂದು ಪೇಚಾಡಬೇಡಿ.</verse>
				<verse number="32">ಇವೆಲ್ಲವುಗಳಿಗಾಗಿ ಪರಕೀಯರೂ ಪರದಾಡುತ್ತಾರೆ; ಇವೆಲ್ಲಾ ನಿಮಗೆ ಅವಶ್ಯ ಎಂದು ಸ್ವರ್ಗದಲ್ಲಿರುವ ನಿಮ್ಮ ತಂದೆಗೆ ತಿಳಿದಿದೆ.</verse>
				<verse number="33">ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.</verse>
				<verse number="34">ಆದುದರಿಂದ ನಾಳೆಯ ಚಿಂತೆ ನಿಮಗೆ ಬೇಡ. ನಾಳೆಯ ಚಿಂತೆ ನಾಳೆಗೇ ಇರಲಿ. ಇಂದಿನ ಪಾಡೇ ಇಂದಿಗೆ ಸಾಕು.”</verse>
			</chapter>
			<chapter number="7">
				<verse number="1">“ನೀವು ಇತರರ ಬಗ್ಗೆ ತೀರ್ಪುಕೊಡಬೇಡಿ; ಆಗ ದೇವರು ನಿಮ್ಮ ಬಗ್ಗೆ ತೀರ್ಪುಕೊಡುವುದಿಲ್ಲ.</verse>
				<verse number="2">ನೀವು ಇತರರ ಬಗ್ಗೆ ಕೊಡುವ ತೀರ್ಪಿಗೆ ಅನುಗುಣವಾಗಿಯೇ ದೇವರು ನಿಮಗೂ ತೀರ್ಪುಕೊಡುವರು. ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು.</verse>
				<verse number="3">ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ನೀನು ಗಮನಿಸುವುದೇಕೆ?</verse>
				<verse number="4">ನಿನ್ನ ಕಣ್ಣಿನಲ್ಲಿ ಒಂದು ದಿಮ್ಮಿಯೇ ಇರುವಾಗ, ‘ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,’ ಎಂದು ನಿನ್ನ ಸೋದರನಿಗೆ ಹೇಗೆ ಹೇಳಬಲ್ಲೆ?</verse>
				<verse number="5">ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು. ಅನಂತರ ನಿನ್ನ ಸೋದರನ ಕಣ್ಣಿನಿಂದ ಅಣುವನ್ನು ತೆಗೆಯಲು ನಿನ್ನ ಕಣ್ಣು ನಿಚ್ಚಳವಾಗಿ ಕಾಣಿಸುವುದು.”</verse>
				<verse number="6">“ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.”</verse>
				<verse number="7">“ಕೇಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.</verse>
				<verse number="8">ಏಕೆಂದರೆ ಕೇಳಿಕೊಳ್ಳುವ ಪ್ರತಿಯೊಬ್ಬನಿಗೆ ಕೊಡಲಾಗುವುದು, ಹುಡುಕುವವನಿಗೆ ಸಿಗುವುದು, ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.</verse>
				<verse number="9">ನಿಮ್ಮಲ್ಲಿ ಯಾವನು ತಾನೇ ತನ್ನ ಮಗ ರೊಟ್ಟಿಯನ್ನು ಕೇಳಿದರೆ ಕಲ್ಲನ್ನು ಕೊಟ್ಟಾನು?</verse>
				<verse number="10">ಮೀನನ್ನು ಕೇಳಿದರೆ ಹಾವನ್ನು ಕೊಟ್ಟಾನು?</verse>
				<verse number="11">ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅದಕ್ಕಿಂತಲೂ ಎಷ್ಟೋ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಒಳ್ಳೆಯ ಕೊಡುಗೆಗಳನ್ನು ಕೊಡಬಲ್ಲರು!”</verse>
				<verse number="12">“ಜನರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ, ಅದನ್ನೇ ನೀವು ಅವರಿಗೆ ಮಾಡಿ, ಧರ್ಮಶಾಸ್ತ್ರದ ಹಾಗೂ ಪ್ರವಾದನೆಗಳ ಸಾರ ಇದೇ.”</verse>
				<verse number="13">“ಕಿರಿದಾದ ಬಾಗಿಲಿನಿಂದಲೇ ಒಳಕ್ಕೆ ಹೋಗಿರಿ. ಏಕೆಂದರೆ ವಿನಾಶಕ್ಕೆ ಒಯ್ಯುವ ಬಾಗಿಲು ಹಿರಿದು; ಅದರ ಮಾರ್ಗ ಸರಾಗ; ಅದನ್ನು ಹಿಡಿಯುವವರು ಅನೇಕರು.</verse>
				<verse number="14">ಅಮರ ಜೀವಕ್ಕೆ ಕೊಂಡೊಯ್ಯುವ ಮಾರ್ಗ ದುರ್ಭರ, ಅದರ ಬಾಗಿಲು ಕಿರಿದು; ಅದನ್ನು ಗುರುತಿಸುವವರೋ ಕೆಲವರು.”</verse>
				<verse number="15">“ಸುಳ್ಳು ಪ್ರವಾದಿಗಳ ಬಗ್ಗೆ ಎಚ್ಚರಿಕೆಯಿಂದಿರಿ. ಹೊರಗೆ ಕುರಿಯ ವೇಷದಲ್ಲಿ ಬಂದರೂ ಒಳಗೆ ಅವರು ಕಿತ್ತುತಿನ್ನುವ ತೋಳಗಳು.</verse>
				<verse number="16">ಅವರ ವರ್ತನೆಯಿಂದ ನೀವು ಅವರನ್ನು ಗುರುತು ಹಚ್ಚುವಿರಿ. ಮುಳ್ಳುಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವುದುಂಟೇ? ಮದ್ದುಗುಣಿಕೆಯಲ್ಲಿ ಅಂಜೂರ ಕೀಳುವುದುಂಟೇ?</verse>
				<verse number="17">ಅದರಂತೆಯೇ ಒಳ್ಳೆಯ ಮರ ಒಳ್ಳೆಯ ಹಣ್ಣನ್ನೂ ಕೆಟ್ಟ ಮರವು ಕೆಟ್ಟ ಹಣ್ಣನ್ನೂ ಕೊಡುತ್ತದೆ.</verse>
				<verse number="18">ಒಳ್ಳೆಯ ಮರ ಕೆಟ್ಟ ಹಣ್ಣನ್ನು ಕೊಡಲಾರದು, ಹಾಗೆಯೇ ಕೆಟ್ಟ ಮರ ಒಳ್ಳೆಯ ಹಣ್ಣನ್ನು ಕೊಡಲಾರದು.</verse>
				<verse number="19">ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನೂ ಕಡಿದು ಬೆಂಕಿಯಲ್ಲಿ ಹಾಕಲಾಗುವುದು.</verse>
				<verse number="20">ಆದ್ದರಿಂದ ಸುಳ್ಳು ಪ್ರವಾದಿಗಳನ್ನು ಅವರ ನಡತೆಯಿಂದ ಗುರುತುಹಚ್ಚುವಿರಿ.”</verse>
				<verse number="21">“ನನ್ನನ್ನು ‘ಸ್ವಾಮೀ, ಸ್ವಾಮೀ,’ ಎನ್ನುವ ಪ್ರತಿಯೊಬ್ಬನೂ ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸನು. ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತಾನುಸಾರ ನಡೆಯುವವನು ಮಾತ್ರ ಅದನ್ನು ಪ್ರವೇಶಿಸುವನು.</verse>
				<verse number="22">ತೀರ್ಪಿನ ದಿನದಂದು, ‘ಸ್ವಾಮೀ, ಸ್ವಾಮೀ, ನಿಮ್ಮ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿಮ್ಮ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೆ? ನಿಮ್ಮ ಹೆಸರಿನಲ್ಲಿ ಹಲವಾರು ಮಹತ್ಕಾರ್ಯಗಳನ್ನು ಮಾಡಲಿಲ್ಲವೇ?’ ಎಂದು ಅನೇಕರು ನನಗೆ ಹೇಳುವರು.</verse>
				<verse number="23">ಆಗ ನಾನು ಅವರಿಗೆ ‘ಇಂದಿಗೂ ನಿಮ್ಮ ಗುರುತೇ ನನಗಿಲ್ಲ. ಅಧರ್ಮಿಗಳೇ, ನನ್ನಿಂದ ತೊಲಗಿರಿ,’ ಎಂದು ಬಹಿರಂಗವಾಗಿ ಹೇಳಿಬಿಡುವೆನು.”</verse>
				<verse number="24">“ನನ್ನ ಈ ಮಾತನ್ನು ಕೇಳಿ ಅದರಂತೆ ನಡೆಯುವ ಪ್ರತಿಯೊಬ್ಬನೂ ಬಂಡೆಯ ಮೇಲೆ ಮನೆ ಕಟ್ಟಿಕೊಂಡ ಬುದ್ಧಿವಂತನನ್ನು ಹೋಲುತ್ತಾನೆ.</verse>
				<verse number="25">ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು. ಆದರೂ ಅದು ಬೀಳಲಿಲ್ಲ. ಕಾರಣ ಅದರ ಅಡಿಗಟ್ಟು ಬಂಡೆಯ ಮೇಲಿತ್ತು.</verse>
				<verse number="26">ನನ್ನ ಈ ಮಾತುಗಳನ್ನು ಕೇಳಿಯೂ ಅದರಂತೆ ನಡೆಯದ ಪ್ರತಿಯೊಬ್ಬನೂ ಮರಳಿನ ಮೇಲೆ ಮನೆ ಕಟ್ಟಿಕೊಂಡ ಬುದ್ಧಿಹೀನನನ್ನು ಹೋಲುತ್ತಾನೆ.</verse>
				<verse number="27">ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು; ಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!”</verse>
				<verse number="28">ಯೇಸುಸ್ವಾಮಿ ಇದೆಲ್ಲವನ್ನು ಹೇಳಿ ಮುಗಿಸಿದರು. ಅವರ ಬೋಧನೆ ಜನರಲ್ಲಿ ಅಮೋಘ ಪ್ರಭಾವವನ್ನು ಬೀರಿತು.</verse>
				<verse number="29">ಏಕೆಂದರೆ, ಅವರ ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಯೇಸು ಅಧಿಕಾರ ವಾಣಿಯಿಂದ ಪ್ರಬೋಧಿಸುತ್ತಿದ್ದರು.</verse>
			</chapter>
			<chapter number="8">
				<verse number="1">ಯೇಸುಸ್ವಾಮಿ ಬೆಟ್ಟದಿಂದ ಇಳಿದುಬಂದಾಗ ಜನರು ಗುಂಪುಗುಂಪಾಗಿ ಅವರನ್ನು ಹಿಂಬಾಲಿಸಿದರು.</verse>
				<verse number="2">ಆಗ ಒಬ್ಬ ಕುಷ್ಠರೋಗಿ ಯೇಸುವಿನ ಮುಂದೆ ಬಂದು, ತಲೆಬಾಗಿ, “ಸ್ವಾಮೀ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ,” ಎಂದು ಬೇಡಿದನು.</verse>
				<verse number="3">ಯೇಸು ಕೈಚಾಚಿ ಅವನನ್ನು ಮುಟ್ಟಿ, “ಖಂಡಿತವಾಗಿಯೂ ನನಗೆ ಮನಸ್ಸಿದೆ, ಗುಣಹೊಂದು,” ಎಂದರು. ತಕ್ಷಣವೇ ಅವನ ಕುಷ್ಠವು ಮಾಯವಾಯಿತು.</verse>
				<verse number="4">ಯೇಸು ಅವನಿಗೆ, “ಎಚ್ಚರಿಕೆ, ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿನೋಡಲಿ. ಅನಂತರ ಮೋಶೆ ನಿಯಮಿಸಿರುವ ಪ್ರಕಾರ ಶುದ್ಧೀಕರಣವಿಧಿಯನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು.</verse>
				<verse number="5">ಯೇಸುಸ್ವಾಮಿ ಕಫೆರ್ನವುಮ್ ಊರಿಗೆ ಬಂದಾಗ ಶತಾಧಿಪತಿಯೊಬ್ಬನು ಅವರನ್ನು ಎದುರುಗೊಂಡನು.</verse>
				<verse number="6">“ಪ್ರಭೂ, ನನ್ನ ಸೇವಕ ಮನೆಯಲ್ಲಿ ಪಾರ್ಶ್ವವಾಯು ರೋಗದಿಂದ ಹಾಸಿಗೆ ಹಿಡಿದಿದ್ದಾನೆ. ಬಹಳವಾಗಿ ನರಳುತ್ತಿದ್ದಾನೆ,” ಎಂದು ವಿನಂತಿಸಿದನು.</verse>
				<verse number="7">ಯೇಸು, “ನಾನೇ ಬಂದು ಅವನನ್ನು ಗುಣಪಡಿಸುತ್ತೇನೆ,” ಎಂದರು.</verse>
				<verse number="8">ಅದಕ್ಕೆ ಆ ಶತಾಧಿಪತಿ, “ಪ್ರಭುವೇ, ತಾವು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನಗಿಲ್ಲ. ತಾವು ಒಂದೇ ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು.</verse>
				<verse number="9">ಏಕೆಂದರೆ, ನಾನೂ ಮತ್ತೊಬ್ಬರ ಕೈಕೆಳಗಿರುವವನು. ನನ್ನ ಅಧೀನದಲ್ಲೂ ಸೈನಿಕರಿದ್ದಾರೆ. ಅವರಲ್ಲಿ ಒಬ್ಬನಿಗೆ ನಾನು, ‘ಬಾ’ ಎಂದರೆ ಬರುತ್ತಾನೆ. ಇನ್ನೊಬ್ಬನಿಗೆ, ‘ಹೋಗು’ ಎಂದರೆ ಹೋಗುತ್ತಾನೆ. ಸೇವಕನಿಗೆ, ‘ಇಂಥದ್ದನ್ನು ಮಾಡು’ ಎಂದರೆ ಮಾಡುತ್ತಾನೆ,” ಎಂದನು.</verse>
				<verse number="10">ಈ ಮಾತನ್ನು ಕೇಳಿದ್ದೇ ಯೇಸುವಿಗೆ ಅತ್ಯಾಶ್ಚರ್ಯವಾಯಿತು. ತಮ್ಮನ್ನು ಹಿಂಬಾಲಿಸಿ ಬರುತ್ತಿದ್ದ ಜನರನ್ನು ನೋಡಿ ಹೀಗೆಂದರು: “ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲಿ ಕೂಡ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.</verse>
				<verse number="11">ಪೂರ್ವ. ಪಶ್ಚಿಮ ದಿಕ್ಕುಗಳಿಂದ ಅನೇಕ ಜನರು ಬಂದು ಅಬ್ರಹಾಮ, ಇಸಾಕ, ಯಕೋಬರ ಸಮೇತ ಸ್ವರ್ಗಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು.</verse>
				<verse number="12">ಆದರೆ ಯಾರು ಈ ಸಾಮ್ರಾಜ್ಯಕ್ಕೆ ಬಾಧ್ಯಸ್ಥರೋ ಅವರನ್ನೇ ಹೊರಗೆ ದಬ್ಬಲಾಗುವುದು; ಅಲ್ಲಿ, ಆ ಕಾರ್ಗತ್ತಲಲ್ಲಿ, ಅವರ ಗೋಳಾಟವೇನು! ಹಲ್ಲು ಕಡಿತವೇನು!”</verse>
				<verse number="13">ಅನಂತರ ಯೇಸು ಆ ಶತಾಧಿಪತಿಗೆ, “ಇನ್ನು ಮನೆಗೆ ಹೋಗು, ನೀನು ವಿಶ್ವಾಸಿಸಿದಂತೆಯೇ ಆಗುವುದು,” ಎಂದರು. ಅದೇ ಕ್ಷಣದಲ್ಲಿ ಅವನ ಸೇವಕನು ಸ್ವಸ್ಥನಾದನು.</verse>
				<verse number="14">ತರುವಾಯ ಯೇಸುಸ್ವಾಮಿ ಪೇತ್ರನ ಮನೆಗೆ ಬಂದರು. ಅಲ್ಲಿ ಪೇತ್ರನ ಅತ್ತೆ ಜ್ವರದಿಂದ ಮಲಗಿರುವುದನ್ನು ಕಂಡರು.</verse>
				<verse number="15">ಯೇಸು ಆಕೆಯ ಕೈಮುಟ್ಟಿದುದೇ ಜ್ವರ ಬಿಟ್ಟುಹೋಯಿತು, ಆಕೆ ಎದ್ದು ಅವರನ್ನು ಸತ್ಕರಿಸಿದಳು.</verse>
				<verse number="16">ಸಂಜೆಯಾಯಿತು, ದೆವ್ವ ಹಿಡಿದ ಅನೇಕರನ್ನು ಯೇಸುವಿನ ಬಳಿಗೆ ಕರೆತರಲಾಯಿತು. ಯೇಸು ತಮ್ಮ ಒಂದು ಮಾತಿನಿಂದಲೇ ದೆವ್ವಗಳನ್ನು ಬಿಡಿಸಿದರು. ಮಾತ್ರವಲ್ಲ, ರೋಗಪೀಡಿತರೆಲ್ಲರನ್ನೂ ಗುಣಪಡಿಸಿದರು.</verse>
				<verse number="17">ಹೀಗೆ, “ನಮ್ಮ ದುರ್ಬಲತೆಗಳನ್ನು ವಹಿಸಿಕೊಂಡನು; ನಮ್ಮ ರೋಗರುಜಿನಗಳನ್ನು ಆತನೇ ಪರಿಹರಿಸಿದನು,” ಎಂಬ ಯೆಶಾಯನ ಪ್ರವಾದನೆ ಈಡೇರಿತು.</verse>
				<verse number="18">ದೊಡ್ಡ ಜನಸಮೂಹ ತಮ್ಮ ಸುತ್ತಲೂ ನಿಂತಿರುವುದನ್ನು ಯೇಸುಸ್ವಾಮಿ ನೋಡಿದರು. ಸರೋವರದ ಆಚೆಯ ದಡಕ್ಕೆ ಹೋಗಲು ತಮ್ಮ ಶಿಷ್ಯರಿಗೆ ಅಪ್ಪಣೆಮಾಡಿದರು.</verse>
				<verse number="19">ಆಗ ಒಬ್ಬ ಧರ್ಮಶಾಸ್ತ್ರಿ ಬಂದು, “ಗುರುವೇ, ನೀವು ಎಲ್ಲಿಗೆಹೋದರೂ ನಿಮ್ಮನ್ನು ಹಿಂಬಾಲಿಸಿ ಬರುತ್ತೇನೆ,” ಎಂದನು.</verse>
				<verse number="20">ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು.</verse>
				<verse number="21">ಶಿಷ್ಯರಲ್ಲಿ ಮತ್ತೊಬ್ಬನು ಮುಂದೆ ಬಂದು, “ಸ್ವಾಮೀ, ಮೊದಲು ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮುಗಿಸಲು ಸಮಯ ಕೊಡಿ,” ಎಂದು ಕೇಳಿದನು.</verse>
				<verse number="22">ಅವನಿಗೆ ಯೇಸು, “ಸತ್ತವರೇ ತಮ್ಮ ಸತ್ತವರನ್ನು ಸಮಾಧಿ ಮಾಡಿಕೊಳ್ಳಲಿ; ನೀನು ನನ್ನನ್ನು ಹಿಂಬಾಲಿಸು,” ಎಂದರು.</verse>
				<verse number="23">ಆಮೇಲೆ ಯೇಸುಸ್ವಾಮಿ ದೋಣಿಯನ್ನು ಹತ್ತಿದರು. ಶಿಷ್ಯರೂ ಹತ್ತಿ ಅವರ ಸಂಗಡಹೋದರು.</verse>
				<verse number="24">ಇದ್ದಕ್ಕಿದ್ದ ಹಾಗೆ ಸರೋವರದಲ್ಲಿ ರಭಸವಾದ ಬಿರುಗಾಳಿ ಎದ್ದಿತು. ದೋಣಿ ಅಲೆಗಳಿಂದ ಮುಳುಗಿಹೋಗುವುದರಲ್ಲಿತ್ತು. ಯೇಸುವಾದರೋ ನಿದ್ರಾವಶರಾಗಿದ್ದರು.</verse>
				<verse number="25">ಶಿಷ್ಯರು ಹತ್ತಿರಕ್ಕೆ ಬಂದು ಅವರನ್ನು ಎಬ್ಬಿಸಿ, “ಸ್ವಾಮೀ, ಕಾಪಾಡಿ. ನಾವು ನೀರುಪಾಲಾಗುತ್ತಿದ್ದೇವೆ,” ಎಂದರು.</verse>
				<verse number="26">ಅದಕ್ಕೆ ಯೇಸು, “ಅಲ್ಪವಿಶ್ವಾಸಿಗಳೇ, ನಿಮಗೇಕೆ ಇಷ್ಟು ಭಯ?” ಎಂದರು. ಅನಂತರ ಎದ್ದು ನಿಂತು ಸುಂಟರಗಾಳಿಯನ್ನೂ ಸರೋವರವನ್ನೂ ಗದರಿಸಿದರು.</verse>
				<verse number="27">ಆಗ ವಾತಾವರಣ ಪ್ರಶಾಂತವಾಯಿತು. ಶಿಷ್ಯರು ನಿಬ್ಬೆರಗಾದರು. “ಗಾಳಿಯೂ ಸರೋವರವೂ ಇವರು ಹೇಳಿದ್ದಂತೆ ಕೇಳಬೇಕಾದರೆ ಇವರೆಂತಹ ವ್ಯಕ್ತಿಯಾಗಿರಬೇಕು!” ಎಂದುಕೊಂಡರು.</verse>
				<verse number="28">ಯೇಸುಸ್ವಾಮಿ ಗಲಿಲೇಯ ಸರೋವರವನ್ನು ದಾಟಿ, ಆಚೆಯ ಕಡೆಯಿದ್ದ ಗದರೇನ ಎಂಬ ಪ್ರಾಂತ್ಯಕ್ಕೆ ಬಂದರು. ದೆವ್ವ ಹಿಡಿದಿದ್ದ ಇಬ್ಬರು ಸಮಾಧಿಯ ಗುಹೆಗಳಿಂದ ಹೊರಬಂದು ಅವರಿಗೆ ಎದುರಾದರು. ಅವರಿಬ್ಬರೂ ಮಹಾಕ್ರೂರಿಗಳು. ಈ ಕಾರಣ ಯಾರೂ ಆ ಮಾರ್ಗವಾಗಿ ಹೋಗಲಾಗುತ್ತಿರಲಿಲ್ಲ.</verse>
				<verse number="29">ಅವರು ಯೇಸುವನ್ನು ನೋಡಿದೊಡನೆಯೇ, “ಓ ದೇವರ ಪುತ್ರನೇ, ನಿಮಗೇಕೆ ನಮ್ಮ ಗೊಡವೆ? ನಿಯಮಿತಕಾಲಕ್ಕೆ ಮುಂಚೆಯೇ ನಮ್ಮನ್ನು ಪೀಡಿಸಲು ಬಂದಿರಾ?” ಎಂದು ಕೂಗಿಕೊಂಡರು.</verse>
				<verse number="30">ಹಂದಿಗಳ ದೊಡ್ಡ ಹಿಂಡೊಂದು ಅಲ್ಲಿಂದ ಸ್ವಲ್ಪದೂರದಲ್ಲೇ ಮೇಯುತ್ತಿತ್ತು.</verse>
				<verse number="31">“ನೀವು ನಮ್ಮನ್ನು ಹೊರದೂಡಿದ್ದೇ ಆದರೆ ಆ ಹಂದಿಗಳ ಹಿಂಡಿಗೆ ನಮ್ಮನ್ನು ಕಳುಹಿಸಿಕೊಡಿ,” ಎಂದು ಆ ದೆವ್ವಗಳು ಯೇಸುವನ್ನು ಬೇಡಿಕೊಂಡವು.</verse>
				<verse number="32">ಯೇಸು, “ಹೋಗಿ” ಎಂದು ಅಪ್ಪಣೆಯಿತ್ತರು. ದೆವ್ವಗಳು ಹೊರಗೆ ಬಂದು ಹಂದಿಗಳ ಹಿಂಡನ್ನು ಹೊಕ್ಕವು. ಆ ಕ್ಷಣವೇ ಆ ಹಿಂಡೆಲ್ಲಾ ಬೆಟ್ಟದ ಕಡಿದಾದ ಬದಿಯಿಂದ ಧಾವಿಸಿ, ಸರೋವರಕ್ಕೆ ಬಿದ್ದು, ನೀರುಪಾಲಾಗಿಹೋಯಿತು.</verse>
				<verse number="33">ಹಂದಿ ಮೇಯಿಸುತ್ತಿದ್ದವರು ಅಲ್ಲಿಂದ ಪಲಾಯನಮಾಡಿ ಊರಿಗೆ ಓಡಿಹೋಗಿ ನಡೆದದ್ದೆಲ್ಲವನ್ನೂ ಮತ್ತು ದೆವ್ವ ಮೆಟ್ಟಿದ್ದವರಿಗೆ ಸಂಭವಿಸಿದ್ದನ್ನೂ ವರದಿಮಾಡಿದರು.</verse>
				<verse number="34">ಆಗ ಊರಿಗೆ ಊರೇ ಯೇಸುವನ್ನು ನೋಡಲು ಬಂದಿತು. ಅವರನ್ನು ಕಂಡು ತಮ್ಮ ಆಸುಪಾಸನ್ನು ಬಿಟ್ಟುಹೋಗಬೇಕೆಂದು ಮನವಿಮಾಡಿಕೊಂಡಿತು.</verse>
			</chapter>
			<chapter number="9">
				<verse number="1">ಯೇಸುಸ್ವಾಮಿ ದೋಣಿ ಹತ್ತಿ ಮರಳಿ ಸರೋವರವನ್ನು ದಾಟಿ ತಮ್ಮ ಸ್ವಂತ ಊರಿಗೆ ಬಂದರು.</verse>
				<verse number="2">ಆಗ ಜನರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅವರ ಬಳಿಗೆ ತಂದರು. ಯೇಸು ಅವರ ವಿಶ್ವಾಸವನ್ನು ಮೆಚ್ಚಿ, ಆ ಪಾರ್ಶ್ವವಾಯು ರೋಗಿಗೆ, “ಮಗು, ಧೈರ್ಯದಿಂದಿರು. ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.</verse>
				<verse number="3">ಆಗ ಅಲ್ಲಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, “ಇವನು ದೇವದೂಷಣೆ ಮಾಡುತ್ತಿದ್ದಾನೆ,” ಎಂದುಕೊಂಡರು.</verse>
				<verse number="4">ಯೇಸು ಅವರ ಆಲೋಚನೆಗಳನ್ನು ಅರಿತುಕೊಂಡು, “ನೀವು ಮನಸ್ಸಿನಲ್ಲೇಕೆ ದುರಾಲೋಚನೆ ಮಾಡುತ್ತಿದ್ದೀರಿ?</verse>
				<verse number="5">‘ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ’ ಎನ್ನುವುದು ಸುಲಭವೋ ಅಥವಾ ‘ಎದ್ದು ನಡೆ’ ಎನ್ನುವುದು ಸುಲಭವೋ?</verse>
				<verse number="6">ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ, “ಎದ್ದೇಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದರು.</verse>
				<verse number="7">ಅದರಂತೆಯೇ, ಆ ರೋಗಿ ಎದ್ದು ಮನೆಗೆ ಹೊರಟುಹೋದನು.</verse>
				<verse number="8">ಇದನ್ನು ಕಂಡ ಜನರು ತಲ್ಲಣಗೊಂಡರು. ಮಾನವನಿಗೆ ಇಂಥ ಅಧಿಕಾರ ಕೊಟ್ಟ ದೇವರನ್ನು ಕೊಂಡಾಡಿದರು.</verse>
				<verse number="9">ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಮುಂದಕ್ಕೆ ಹೋಗುತ್ತಿದ್ದಾಗ ಮತ್ತಾಯ ಎಂಬವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಯೇಸು ಅವನನ್ನು ಕರೆದರು. ಮತ್ತಾಯನು ಎದ್ದು ಅವರನ್ನು ಹಿಂಬಾಲಿಸಿದನು.</verse>
				<verse number="10">ಇದಾದ ಮೇಲೆ ಯೇಸುಸ್ವಾಮಿ ಮತ್ತಾಯನ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ‘ಸುಂಕದವರೂ’ ‘ಪಾಪಿಷ್ಠರೂ’ ಅಲ್ಲಿಗೆ ಬಂದರು. ಯೇಸು ಮತ್ತು ಅವರ ಶಿಷ್ಯರು ಕುಳಿತಿದ್ದ ಪಂಕ್ತಿಯಲ್ಲೇ ಇವರೂ ಊಟಕ್ಕೆ ಕುಳಿತರು.</verse>
				<verse number="11">ಫರಿಸಾಯರು ಇದನ್ನು ಕಂಡದ್ದೇ ಯೇಸುವಿನ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮ ಗುರು ಇಂತಹ ಬಹಿಷ್ಕೃತ ಜನರ ಜೊತೆಯಲ್ಲಿ ಊಟಮಾಡುವುದೇ?’ ಎಂದು ಆಕ್ಷೇಪಿಸಿದರು.</verse>
				<verse number="12">ಇದನ್ನು ಕೇಳಿಸಿಕೊಂಡ ಯೇಸು, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ; ಆರೋಗ್ಯವಂತರಿಗಲ್ಲ.</verse>
				<verse number="13">ನೀವು ಹೋಗಿ, ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.</verse>
				<verse number="14">ಬಳಿಕ ಯೊವಾನ್ನನ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದರು. “ನಾವೂ ಫರಿಸಾಯರೂ ಉಪವಾಸ ವ್ರತವನ್ನು ಕೈಗೊಳ್ಳುತ್ತೇವೆ. ಆದರೆ ನಿಮ್ಮ ಶಿಷ್ಯರು ಏಕೆ ಹಾಗೆ ಮಾಡುವುದಿಲ್ಲ?” ಎಂದು ಪ್ರಶ್ನೆಹಾಕಿದರು.</verse>
				<verse number="15">ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಷ್ಟು ಕಾಲ ಅವನ ಆಪ್ತರು ದುಃಖಪಡುವುದುಂಟೇ? ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು; ಆಗ ಅವರು ಉಪವಾಸ ಮಾಡುವರು.</verse>
				<verse number="16">“ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಏಕೆಂದರೆ ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.</verse>
				<verse number="17">ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ತುಂಬಿಡುವುದಿಲ್ಲ. ತುಂಬಿಟ್ಟರೆ ಬುದ್ದಲಿಗಳು ಬಿರಿಯುತ್ತವೆ, ಮದ್ಯವು ಚೆಲ್ಲಿಹೋಗುತ್ತದೆ; ಬುದ್ದಲಿಗಳೂ ಹಾಳಾಗುತ್ತವೆ. ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡುತ್ತಾರೆ. ಆಗ ಎರಡೂ ಉಳಿಯುತ್ತವೆ,” ಎಂದರು.</verse>
				<verse number="18">ಯೇಸುಸ್ವಾಮಿ ಹೀಗೆ ಬೋಧಿಸುತ್ತಿರುವಾಗಲೇ ಯೆಹೂದ್ಯ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನು ಯೇಸುವಿನ ಮುಂದೆ ಮೊಣಕಾಲೂರಿ, “ನನ್ನ ಮಗಳು ಈಗ ತಾನೆ ಸತ್ತುಹೋದಳು. ಆದರೂ ತಾವು ದಯಮಾಡಿಸಿ ತಮ್ಮ ಹಸ್ತವನ್ನು ಆಕೆಯ ಮೇಲಿಡಬೇಕು. ಅವಳು ಮರಳಿ ಬದುಕುವಳು,” ಎಂದು ಬೇಡಿಕೊಂಡನು.</verse>
				<verse number="19">ಯೇಸು ಎದ್ದು ಅವನ ಹಿಂದೆ ಹೊರಟರು. ಶಿಷ್ಯರೂ ಹಿಂಬಾಲಿಸಿಹೋದರು.</verse>
				<verse number="20">ಹೋಗುತ್ತಿದ್ದಾಗ, ಹನ್ನೆರಡು ವರ್ಷಗಳಿಂದ ರಕ್ತಸ್ರಾವ ರೋಗದಿಂದ ಬಹಳವಾಗಿ ನರಳುತ್ತಿದ್ದ ಒಬ್ಬ ಮಹಿಳೆ ಹಿಂಬದಿಯಿಂದ ಬಂದು ಯೇಸುಸ್ವಾಮಿಯ ಉಡುಪಿನ ಅಂಚನ್ನು ಮುಟ್ಟಿದಳು.</verse>
				<verse number="21">‘ನಾನು ಅವರ ಉಡುಪನ್ನು ಮುಟ್ಟಿದರೂ ಸಾಕು, ಗುಣಹೊಂದುವೆನು’ ಎಂದುಕೊಂಡಿದ್ದಳು ಆಕೆ.</verse>
				<verse number="22">ಯೇಸು ಹಿಂದಿರುಗಿ ಆಕೆಯನ್ನು ನೋಡಿ, “ಮಗಳೇ ಹೆದರಬೇಡ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ,” ಎಂದರು. ಆ ಕ್ಷಣದಲ್ಲೇ ಆಕೆ ವ್ಯಾಧಿಯಿಂದ ಮುಕ್ತಳಾದಳು.</verse>
				<verse number="23">ಯೇಸು ಆ ಅಧಿಕಾರಿಯ ಮನೆಯನ್ನು ತಲುಪಿದರು. ಅಲ್ಲಿ ವಾದ್ಯಗಾರರನ್ನೂ ಗದ್ದಲಮಾಡುತ್ತಿದ್ದ ಜನಜಂಗುಳಿಯನ್ನೂ ಕಂಡು,</verse>
				<verse number="24">“ಎಲ್ಲರೂ ಇಲ್ಲಿಂದ ಹೊರಡಿರಿ, ಬಾಲಕಿ ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ,” ಎಂದರು. ಜನರು ನಕ್ಕು ಅವರನ್ನು ಪರಿಹಾಸ್ಯಮಾಡಿದರು.</verse>
				<verse number="25">ಆದರೂ ಜನರ ಗುಂಪನ್ನು ಹೊರಗೆ ಕಳುಹಿಸಿ, ಯೇಸು ಕೊಠಡಿಯೊಳಕ್ಕೆ ಹೋಗಿ, ಬಾಲಕಿಯ ಕೈಹಿಡಿದು ಎಬ್ಬಿಸಿದರು. ಆಕೆ ಎದ್ದಳು.</verse>
				<verse number="26">ಈ ಸಮಾಚಾರ ಆ ನಾಡಿನಲ್ಲೆಲ್ಲಾ ಹಬ್ಬಿಹರಡಿತು.</verse>
				<verse number="27">ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ದನಿಯೆತ್ತಿ ಕೂಗಿಕೊಳ್ಳುತ್ತಾ ಅವರ ಹಿಂದೆಹೋದರು.</verse>
				<verse number="28">ಯೇಸು ಮನೆ ಸೇರಿದಾಗ ಆ ಕುರುಡರು ಸಮೀಪಕ್ಕೆ ಬಂದರು. “ನಾನು ನಿಮ್ಮನ್ನು ಗುಣಪಡಿಸಬಲ್ಲೆನೆಂದು ನೀವು ವಿಶ್ವಾಸವಿಡುತ್ತೀರೋ?” ಎಂದು ಯೇಸು ಪ್ರಶ್ನಿಸಿದರು. “ಹೌದು ಸ್ವಾಮೀ, ಹೌದು,” ಎಂದು ಅವರು ಉತ್ತರವಿತ್ತರು.</verse>
				<verse number="29">ಆಗ ಯೇಸು ಅವರ ಕಣ್ಣುಗಳನ್ನು ಮುಟ್ಟಿ, “ನೀವು ವಿಶ್ವಾಸವಿಟ್ಟ ಪ್ರಕಾರವೇ ನಿಮಗೆ ಗುಣವಾಗಲಿ,” ಎಂದರು.</verse>
				<verse number="30">ಅವರಿಗೆ ದೃಷ್ಟಿ ಬಂದಿತು. “ಈ ವಿಷಯ ಯಾರಿಗೂ ತಿಳಿಯಬಾರದು, ಎಚ್ಚರಿಕೆ!” ಎಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು.</verse>
				<verse number="31">ಆದರೂ ಅವರು ಹೋಗಿ ಆ ಪ್ರಾಂತ್ಯದಲ್ಲೆಲ್ಲಾ ಸ್ವಾಮಿಯ ಕೀರ್ತಿಯನ್ನು ಹರಡಿದರು.</verse>
				<verse number="32">ಕುರುಡರು ಹೊರಟುಹೋಗುತ್ತಿದ್ದ ಹಾಗೆ, ದೆವ್ವ ಹಿಡಿದಿದ್ದ ಒಬ್ಬ ಮೂಕನನ್ನು ಕೆಲವರು ಯೇಸುಸ್ವಾಮಿಯ ಬಳಿಗೆ ಕರೆತಂದರು.</verse>
				<verse number="33">ದೆವ್ವ ಬಿಡಿಸಿದ ಮೇಲೆ ಆ ಮೂಕನಿಗೆ ಮಾತು ಬಂದಿತು. ಜನರೆಲ್ಲರೂ ಆಶ್ಚರ್ಯಚಕಿತರಾದರು. “ಇಂತಹ ಕಾರ್ಯವನ್ನು ನಾವು ಇಸ್ರಯೇಲಿನಲ್ಲಿ ಕಂಡದ್ದೇ ಇಲ್ಲ!” ಎಂದುಕೊಂಡರು.</verse>
				<verse number="34">ಆದರೆ ಫರಿಸಾಯರು, “ಇವನು ದೆವ್ವಗಳೊಡೆಯನ ಶಕ್ತಿಯಿಂದಲೇ ದೆವ್ವಗಳನ್ನು ಬಿಡಿಸುತ್ತಾನೆ,” ಎಂದರು.</verse>
				<verse number="35">ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾತರದ ರೋಗರುಜಿನಗಳನ್ನು ಗುಣಪಡಿಸಿದರು.</verse>
				<verse number="36">ಆ ಜನಸಮೂಹವನ್ನು ಕಂಡಾಗ ಅವರ ಮನ ಕರಗಿತು.</verse>
				<verse number="37">ಏಕೆಂದರೆ, ಕುರುಬನಿಲ್ಲದ ಕುರಿಗಳಂತೆ ಅವರು ತೊಳಲಿದ್ದರು ಹಾಗೂ ಬಳಲಿದ್ದರು.</verse>
				<verse number="38">ಆದುದರಿಂದ ಯೇಸು ತಮ್ಮ ಶಿಷ್ಯರಿಗೆ, “ಬೆಳೆಯೇನೋ ಹೇರಳ; ಕೊಯಿಲುಗಾರರೋ ವಿರಳ; ಈ ಕಾರಣ ತನ್ನ ಕೊಯಿಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಪ್ರಾರ್ಥಿಸಿರಿ,” ಎಂದರು.</verse>
			</chapter>
			<chapter number="10">
				<verse number="1">ಯೇಸುಸ್ವಾಮಿ ತಮ್ಮ ಹನ್ನೆರಡುಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು, ಎಲ್ಲ ರೋಗರುಜಿನಗಳನ್ನು ಗುಣಪಡಿಸುವುದಕ್ಕೂ ದೆವ್ವಗಳನ್ನು ಬಿಡಿಸುವುದಕ್ಕೂ ಅವರಿಗೆ ಅಧಿಕಾರವನ್ನು ಕೊಟ್ಟರು.</verse>
				<verse number="2">ಆ ಹನ್ನೆರಡುಮಂದಿ ಪ್ರೇಷಿತರ ಹೆಸರುಗಳು ಇವು; ಮೊದಲನೆಯವನು ಪೇತ್ರ ಎನಿಸಿಕೊಂಡ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ; ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ;</verse>
				<verse number="3">ಫಿಲಿಪ್ಪ ಮತ್ತು ಬಾರ್ತೊಲೊಮಾಯ; ತೋಮ ಮತ್ತು ಸುಂಕ ವಸೂಲಿಗಾರ ಮತ್ತಾಯ; ಅಲ್ಫಾಯನ ಮಗ ಯಕೋಬ ಮತ್ತು ತದ್ದಾಯ;</verse>
				<verse number="4">ದೇಶಾಭಿಮಾನಿ ಎಂದು ಕರೆಯಲಾದ ಸಿಮೋನ ಮತ್ತು ಗುರುದ್ರೋಹಿ ಆಗಲಿದ್ದ ಯೂದ ಇಸ್ಕರಿಯೋತ.</verse>
				<verse number="5">ಆ ಹನ್ನೆರಡುಮಂದಿಯ ನಿಯೋಗವನ್ನು ಕಳುಹಿಸುವಾಗ ಯೇಸುಸ್ವಾಮಿ ಅವರಿಗೆ ಕೊಟ್ಟ ಆದೇಶ ಇದು: “ಪರಕೀಯರತ್ತ ಹೋಗಲೇಬೇಡಿ; ಸಮಾರಿಯದವರ ಯಾವ ಊರಿಗೂ ಕಾಲಿಡಬೇಡಿ.</verse>
				<verse number="6">ಅದಕ್ಕೆ ಬದಲು ತಪ್ಪಿಹೋದ ಕುರಿಗಳಂತೆ ಇರುವ ಇಸ್ರಯೇಲ್ ಜನರ ಬಳಿಗೆ ಹೋಗಿರಿ;</verse>
				<verse number="7">ಹೋಗುತ್ತಾ, ‘ಸ್ವರ್ಗಸಾಮ್ರಾಜ್ಯವು ಸಮೀಪಿಸಿದೆ’ ಎಂದು ಬೋಧನೆಮಾಡಿರಿ.</verse>
				<verse number="8">ರೋಗಿಗಳನ್ನು ಗುಣಪಡಿಸಿರಿ, ಸತ್ತವರನ್ನು ಮತ್ತೆ ಬದುಕಿಸಿರಿ, ಕುಷ್ಠರೋಗಿಗಳನ್ನು ಸ್ವಸ್ಥಮಾಡಿರಿ. ದೆವ್ವಗಳನ್ನು ಬಿಡಿಸಿರಿ, ಉಚಿತವಾಗಿ ಪಡೆದಿರುವಿರಿ, ಉಚಿತವಾಗಿ ಕೊಡಿ.</verse>
				<verse number="9">ಜೇಬಿನಲ್ಲಿ ಚಿನ್ನ, ಬೆಳ್ಳಿ, ತಾಮ್ರವನ್ನಾಗಲಿ, ಪ್ರಯಾಣಕ್ಕೆಂದು ಜೋಳಿಗೆಯನ್ನಾಗಲಿ,</verse>
				<verse number="10">ಎರಡು ಅಂಗಿಗಳನ್ನಾಗಲಿ, ಕಾಲಿಗೆ ಕೆರವನ್ನಾಗಲಿ, ಕೈಗೆ ದಂಡವನ್ನಾಗಲಿ ತೆಗೆದುಕೊಳ್ಳಬೇಡಿ. ಏಕೆಂದರೆ, ದುಡಿಮೆಗಾರನು ಜೀವನಾಧಾರಕ್ಕೆ ಬಾಧ್ಯನು.</verse>
				<verse number="11">“ನೀವು ಒಂದು ಪಟ್ಟಣಕ್ಕಾಗಲಿ, ಹಳ್ಳಿಗಾಗಲಿ ಹೋದಾಗ, ಅಲ್ಲಿ ನಿಮ್ಮನ್ನು ಬರಮಾಡಿಕೊಳ್ಳಲು ಯೋಗ್ಯನು ಯಾರೆಂದು ಕಂಡುಹಿಡಿಯಿರಿ. ಅಲ್ಲಿಂದ ಮುಂದಕ್ಕೆ ಸಾಗುವವರೆಗೂ ಅವನಲ್ಲೇ ತಂಗಿರಿ.</verse>
				<verse number="12">ನೀವು ಒಂದು ಮನೆಗೆ ಹೋದಾಗ, “ಈ ಮನೆಗೆ ಶುಭವಾಗಲಿ!” ಎಂದು ಹರಸಿರಿ.</verse>
				<verse number="13">ಆ ಮನೆಯವರು ನಿಮ್ಮನ್ನು ಸ್ವಾಗತಿಸಿದರೆ, ನಿಮ್ಮ ಆಶೀರ್ವಾದ ಅವರ ಮೇಲೆ ನೆಲಸಲಿ. ನಿಮ್ಮನ್ನು ಸ್ವಾಗತಿಸದೆಹೋದರೆ, ನಿಮ್ಮ ಆಶೀರ್ವಾದ ನಿಮಗೇ ಹಿಂದಿರುಗಲಿ.</verse>
				<verse number="14">ಒಂದು ಮನೆಯೇ ಆಗಲಿ, ಊರೇ ಆಗಲಿ, ನಿಮ್ಮನ್ನು ಸ್ವಾಗತಿಸದೆ ಅಥವಾ ನಿಮಗೆ ಕಿವಿಗೊಡದೆಹೋದರೆ, ಆ ಮನೆಯನ್ನು ಅಥವಾ ಊರನ್ನು ಬಿಟ್ಟು ಮುಂದಕ್ಕೆ ಹೋಗಿರಿ. ಹೋಗುವಾಗ ನಿಮ್ಮ ಪಾದಗಳಿಗೆ ಅಂಟಿರುವ ದೂಳನ್ನೂ ಝಾಡಿಸಿಬಿಡಿ.</verse>
				<verse number="15">ತೀರ್ಪಿನ ದಿನ ಆ ಊರಿನ ಗತಿ ಸೊದೋಮ್ ಮತ್ತು ಗೊಮೋರ ಊರುಗಳ ಗತಿಗಿಂತ ಕಠಿಣವಾಗಿರುವುದೆಂದು ನಾನು ನಿಮಗೆ ಒತ್ತಿ ಹೇಳುತ್ತೇನೆ.</verse>
				<verse number="16">“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.</verse>
				<verse number="17">ಜನರ ಬಗ್ಗೆ ಜಾಗರೂಕರಾಗಿರಿ! ಅವರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಹಿಡಿದೊಪ್ಪಿಸುವರು. ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವರು.</verse>
				<verse number="18">ನನ್ನ ನಿಮಿತ್ತ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರುಗಳ ಮುಂದೆ ಎಳೆದೊಯ್ಯುವರು. ಅವರ ಹಾಗೂ ಪರಕೀಯರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ.</verse>
				<verse number="19">ನಿಮ್ಮನ್ನು ಹಿಡಿದೊಪ್ಪಿಸುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ. ಏಕೆಂದರೆ ನೀವು ಹೇಳಬೇಕಾದುದ್ದನ್ನು ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡಲಾಗುವುದು.</verse>
				<verse number="20">ಆಗ ಮಾತನಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮವೇ ನಿಮ್ಮ ಮುಖಾಂತರ ಮಾತನಾಡುವುದು.</verse>
				<verse number="21">ಸಹೋದರನು ಸಹೋದರನನ್ನೇ ತಂದೆಯು ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.</verse>
				<verse number="22">ನೀವು ನನ್ನವರು; ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.</verse>
				<verse number="23">ಒಂದು ಊರಿನಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ, ಮತ್ತೊಂದು ಊರಿನಲ್ಲಿ ಆಶ್ರಯ ಪಡೆಯಿರಿ. ನರಪುತ್ರನು ಬರುವಷ್ಟರಲ್ಲಿ ನೀವು ಇಸ್ರಯೇಲ್ ಜನರ ಊರುಗಳನ್ನೆಲ್ಲಾ ಸುತ್ತಿ ಮುಗಿಸಿರಲಾರಿರಿ; ಇದು ನಿಶ್ಚಯ.</verse>
				<verse number="24">ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ದಾಸನು ದಣಿಗಿಂತ ದೊಡ್ಡವನಲ್ಲ.</verse>
				<verse number="25">ಗುರುವಿನಂತೆ ಶಿಷ್ಯನೂ ದಣಿಯಂತೆ ದಾಸನೂ ಆದರೆ ಸಾಕು. ಮನೆಯ ಯಜಮಾನನನ್ನೇ ‘ಬೆಲ್ಜಬೂಲ್’ ಎಂದು ಕರೆದಿರುವಾಗ ಅವನ ಮನೆಯವರನ್ನು ಇನ್ನೆಷ್ಟು ಅವಹೇಳನ ಮಾಡಲಾರರು?”</verse>
				<verse number="26">“ಜನರಿಗೆ ಭಯಪಡಬೇಡಿ. ಮುಚ್ಚುಮರೆ ಆಗಿರುವುದೆಲ್ಲ ಬಟ್ಟಬಯಲಾಗುವುದು. ಗುಟ್ಟಾಗಿ ಇರುವುದೆಲ್ಲ ರಟ್ಟಾಗುವುದು.</verse>
				<verse number="27">ನಾನು ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಪ್ರಚುರಪಡಿಸಿರಿ, ಕಿವಿಮಾತಾಗಿ ಕೇಳಿದ್ದನ್ನು ಮನೆಮಾಳಿಗೆಯ ಮೇಲೆ ನಿಂತು ಸಾರಿರಿ.</verse>
				<verse number="28">ದೇಹವನ್ನು ಕೊಂದು ಹಾಕುವವರಿಗೆ ಭಯಪಡಬೇಡಿ; ಏಕೆಂದರೆ, ಅವರಿಂದ ಆತ್ಮವನ್ನು ಕೊಲ್ಲಲು ಆಗದು. ಆದರೆ ದೇಹಾತ್ಮಗಳೆರಡನ್ನೂ ನರಕದಲ್ಲಿ ನಾಶಮಾಡಬಲ್ಲ ದೇವರಿಗೆ ಭಯಪಡಿ.</verse>
				<verse number="29">ಒಂದು ಕಾಸಿಗೆ ಎರಡು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೆ? ಆದರೂ ಅವುಗಳಲ್ಲಿ ಒಂದಾದರೂ ನಿಮ್ಮ ತಂದೆಯ ಅನುಮತಿಯಿಲ್ಲದೆ ನೆಲಕ್ಕೆ ಬೀಳುವುದಿಲ್ಲ.</verse>
				<verse number="30">ಅಲ್ಲದೆ ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ.</verse>
				<verse number="31">ಆದುದರಿಂದ ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು.</verse>
				<verse number="32">“ಜನರ ಮುಂದೆ, ತಾನು ನನ್ನವನೆಂದು ಬಹಿರಂಗವಾಗಿ ಒಪ್ಪಿಕೊಳ್ಳುವ ಪ್ರತಿಯೊಬ್ಬನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನೆಂದು ಒಪ್ಪಿಕೊಳ್ಳುತ್ತೇನೆ.</verse>
				<verse number="33">ಆದರೆ ಯಾವನಾದರೂ ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸಿದರೆ, ಅಂಥವನನ್ನು ನಾನು ಸಹ ಸ್ವರ್ಗದಲ್ಲಿರುವ ನನ್ನ ಪಿತನ ಮುಂದೆ ನನ್ನವನಲ್ಲವೆಂದು ನಿರಾಕರಿಸುತ್ತೇನೆ.</verse>
				<verse number="34">“ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆನೆಂದು ಭಾವಿಸಬೇಡಿ; ಸಮಾಧಾನವನ್ನಲ್ಲ, ಛೇದಿಸುವ ಖಡ್ಗವನ್ನು ತರಲು ಬಂದೆನು.</verse>
				<verse number="35">ತಂದೆಗೆ ವಿರುದ್ಧ ಮಗನಿಗೂ, ತಾಯಿಗೆ ವಿರುದ್ಧ ಮಗಳಿಗೂ, ಅತ್ತೆಗೆ ವಿರುದ್ಧ ಸೊಸೆಗೂ ಭೇದಹುಟ್ಟಿಸಲು ಬಂದೆನು;</verse>
				<verse number="36">ಒಡಹುಟ್ಟಿದವರೇ ಒಬ್ಬನ ಕಡುವೈರಿಗಳಾಗುವರು.</verse>
				<verse number="37">“ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆಯನ್ನು ಅಥವಾ ತಾಯಿಯನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಅಥವಾ ಮಗಳನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.</verse>
				<verse number="38">ತನ್ನ ಶಿಲುಬೆಯನ್ನು ಹೊತ್ತು ನನ್ನನ್ನು ಹಿಂಬಾಲಿಸದವನು ನನ್ನವನಾಗಲು ಯೋಗ್ಯನಲ್ಲ.</verse>
				<verse number="39">ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವವನು ಅದನ್ನು ಕಳೆದುಕೊಳ್ಳುತ್ತಾನೆ. ನನಗೋಸ್ಕರವಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಾಪಾಡಿಕೊಳ್ಳುತ್ತಾನೆ.</verse>
				<verse number="40">“ನಿಮ್ಮನ್ನು ಸ್ವಾಗತಿಸುವವನು ನನ್ನನ್ನು ಸ್ವಾಗತಿಸುತ್ತಾನೆ; ನನ್ನನ್ನು ಸ್ವಾಗತಿಸುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸ್ವಾಗತಿಸುತ್ತಾನೆ.</verse>
				<verse number="41">ಪ್ರವಾದಿಯನ್ನು ಪ್ರವಾದಿಯೆಂದು ಸ್ವಾಗತಿಸುವವನು ಪ್ರವಾದಿಗೆ ಸಿಗುವ ಪ್ರತಿಫಲವನ್ನು ಪಡೆಯುತ್ತಾನೆ. ಸತ್ಪುರುಷನನ್ನು ಸತ್ಪುರುಷನೆಂದು ಸ್ವಾಗತಿಸುವವನು ಸತ್ಪುರುಷನಿಗೆ ಸಿಗುವ ಪ್ರತಿಫಲವನ್ನು ಪಡೆಯುತ್ತಾನೆ.</verse>
				<verse number="42">ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.”</verse>
			</chapter>
			<chapter number="11">
				<verse number="1">ಯೇಸುಸ್ವಾಮಿ ತಮ್ಮ ಹನ್ನೆರಡುಮಂದಿ ಶಿಷ್ಯರಿಗೆ ಆದೇಶವನ್ನು ಕೊಟ್ಟಾದ ಮೇಲೆ ಅಲ್ಲಿಂದ ಹೊರಟು ಉಪದೇಶ ಮಾಡುವುದಕ್ಕೂ ಬೋಧಿಸುವುದಕ್ಕೂ ಹತ್ತಿರದ ಊರುಗಳಿಗೆ ಹೋದರು.</verse>
				<verse number="2">ಸ್ವಾಮಿಯ ಕಾರ್ಯಕಲಾಪಗಳ ಸುದ್ದಿ ಸೆರೆಯಲ್ಲಿದ್ದ ಸ್ನಾನಿಕ ಯೊವಾನ್ನನ ಕಿವಿಗೆ ಬಿದ್ದಿತು. ಆತನು ತನ್ನ ಶಿಷ್ಯರಲ್ಲಿ ಕೆಲವರನ್ನು ಅವರ ಬಳಿಗೆ ಕಳುಹಿಸಿದನು.</verse>
				<verse number="3">ಇವರು ಬಂದು, “ಯೊವಾನ್ನನು ತಿಳಿಯಪಡಿಸಿದ ಪ್ರಕಾರ ಬರಬೇಕಾದವರು ನೀವೋ? ಅಥವಾ ಬೇರೊಬ್ಬನನ್ನು ನಾವು ಎದುರುನೋಡಬೇಕೋ?\ ಎಂದು ಯೇಸುವನ್ನು ಕೇಳಿದರು.</verse>
				<verse number="4">ಅದಕ್ಕೆ ಯೇಸು, “ನೀವು ಕೇಳುವುದನ್ನೂ ಕಾಣುವುದನ್ನೂ ಯೊವಾನ್ನನಿಗೆ ಹೋಗಿ ತಿಳಿಸಿರಿ.</verse>
				<verse number="5">ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ. ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.</verse>
				<verse number="6">ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು!” ಎಂದು ಹೇಳಿ ಕಳುಹಿಸಿದರು.</verse>
				<verse number="7">ಯೊವಾನ್ನನಿಂದ ಬಂದಿದ್ದ ಶಿಷ್ಯರು ಹೊರಟುಹೋದಾಗ, ಯೇಸುಸ್ವಾಮಿ ಜನಸಮೂಹಕ್ಕೆ ಯೊವಾನ್ನನನ್ನು ಕುರಿತು ಮಾತನಾಡಿದರು: “ಬೆಂಗಾಡಿನಲ್ಲಿ ನೀವು ಏನನ್ನು ನೋಡಲೆಂದು ಹೋದಿರಿ? ಗಾಳಿಗೆ ಓಲಾಡುವ ಜೊಂಡನ್ನೆ?</verse>
				<verse number="8">ಇಲ್ಲವಾದರೆ, ಏಕೆ ಹೋದಿರಿ? ನಯವಾದ ರೇಷ್ಮೆ ಉಡುಪನ್ನು ಧರಿಸಿದ್ದ ವ್ಯಕ್ತಿಯನ್ನು ನೋಡಲು ಹೋದಿರೇನು? ಅಂತಹ ಉಡುಗೆ ತೊಡುಗೆ ಧರಿಸುವವರು ಅರಮನೆಗಳಲ್ಲಿ ಇರುತ್ತಾರಷ್ಟೆ.</verse>
				<verse number="9">ಹಾಗಾದರೆ ಯಾವ ಉದ್ದೇಶದಿಂದ ಹೋದಿರಿ? ಪ್ರವಾದಿಯನ್ನು ನೋಡಲೆಂದೋ ಹೌದು ಪ್ರವಾದಿಗಿಂತಲೂ ಶ್ರೇಷ್ಠನಾದವನನ್ನು ನೋಡಿದಿರಿ ಎಂಬುದು ನಿಜ.</verse>
				<verse number="10">‘ಇಗೋ, ನನ್ನ ದೂತನನ್ನು ನಿನಗೆ ಮುಂದಾಗಿ ಕಳುಹಿಸುವೆನು. ಆತನು ನಿನ್ನ ಮಾರ್ಗವನ್ನು ಮುಂಚಿತವಾಗಿ ಸಿದ್ಧಗೊಳಿಸುವನು’ ಎಂದು ಪವಿತ್ರಗ್ರಂಥದಲ್ಲಿ ಉಲ್ಲೇಖಿಸಿರುವುದು ಈ ಯೊವಾನ್ನನನ್ನು ಕುರಿತೇ.</verse>
				<verse number="11">ಮಾನವನಾಗಿ ಜನಿಸಿದ್ದವರಲ್ಲಿ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಾರೂ ಹುಟ್ಟಿಲ್ಲ! ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ. ಆದರೂ ಸ್ವರ್ಗಸಾಮ್ರಾಜ್ಯದಲ್ಲಿ ಕನಿಷ್ಠನಾದವನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ.</verse>
				<verse number="12">ಯೊವಾನ್ನನು ತನ್ನ ಸಂದೇಶವನ್ನು ಸಾರಿದಂದಿನಿಂದ ಇಂದಿನವರೆಗೆ ಸ್ವರ್ಗಸಾಮ್ರಾಜ್ಯವು ನೂಕುನುಗ್ಗಲಿಗೆ ಗುರಿಯಾಗಿದೆ. ಬಲಪ್ರಯೋಗ ಮಾಡುವವರು ಅದನ್ನು ಸ್ವಾಧೀನಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.</verse>
				<verse number="13">ಯೊವಾನ್ನನ ಕಾಲದ ತನಕ ಧರ್ಮಶಾಸ್ತ್ರ ಹಾಗು ಎಲ್ಲ ಪ್ರವಾದಿಗಳು ದೇವರ ಸಾಮ್ರಾಜ್ಯವನ್ನು ಕುರಿತು ಪ್ರವಾದನೆ ಮಾಡಿದರು.</verse>
				<verse number="14">ಅವರ ಹೇಳಿಕೆಯನ್ನು ನಂಬಲು ನಿಮಗಿಷ್ಟವಿದ್ದರೆ, ಇಗೋ, ಬರತಕ್ಕ ಎಲೀಯನು ಈ ಯೊವಾನ್ನನೇ.</verse>
				<verse number="15">ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ.</verse>
				<verse number="16">“ಈ ಪೀಳಿಗೆಯನ್ನು ನಾನು ಯಾರಿಗೆ ಹೋಲಿಸಲಿ?</verse>
				<verse number="17">ನಾವು ಕೊಳಲನೂದಲು ನೀವು ಕುಣಿದಾಡಲಿಲ್ಲ; ನಾವು ಶೋಕಗೀತೆಗಳ ಹಾಡಲು ನೀವು ಕಣ್ಣೀರಿಡಲಿಲ್ಲ,” ಎಂದು ಪೇಟೆಬೀದಿಯಲ್ಲಿ ಕುಳಿತು, ಒಬ್ಬರಿಗೊಬ್ಬರು ಕೂಗಾಡುವ ಮಕ್ಕಳನ್ನು ಇವರು ಹೋಲುತ್ತಾರೆ.</verse>
				<verse number="18">ಏಕೆಂದರೆ, ಯೊವಾನ್ನನು ಬಂದನು; ಅವನು ಅನ್ನಪಾನೀಯವನ್ನು ಸೇವಿಸಲಿಲ್ಲ. ಅದಕ್ಕೆ, ‘ಇವನಿಗೆ ದೆವ್ವ ಹಿಡಿದಿದೆ’ ಎಂದರು.</verse>
				<verse number="19">ನರಪುತ್ರನು ಬಂದನು; ಅನ್ನಪಾನೀಯಗಳನ್ನು ಸೇವಿಸಿದನು. ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ ಎನ್ನುತ್ತಾರೆ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದರ ಕಾರ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದರು.</verse>
				<verse number="20">ಯಾವ ಪಟ್ಟಣಗಳಲ್ಲಿ ಯೇಸುಸ್ವಾಮಿ ಅದ್ಭುತಕಾರ್ಯಗಳನ್ನು ಹೇರಳವಾಗಿ ಮಾಡಿದ್ದರೋ ಆ ಪಟ್ಟಣಗಳ ಜನರೇ ಪಾಪಕ್ಕೆ ವಿಮುಖರಾಗಲಿಲ್ಲ. ಆದ್ದರಿಂದ ಆ ಪಟ್ಟಣಗಳನ್ನು ಯೇಸು ಖಂಡಿಸಿದರು;</verse>
				<verse number="21">:ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣೀತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಾಪಕ್ಕೆ ವಿಮುಖರಾಗುತ್ತಿದ್ದರು.</verse>
				<verse number="22">ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಮೇಲಾಗಿರುವುದೆಂದು ಒತ್ತಿ ಹೇಳುತ್ತೇನೆ.</verse>
				<verse number="23">ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಸೊದೋಮಿನಲ್ಲಿ ಮಾಡಿದ್ದರೆ, ಅದು ಇಂದಿನವರೆಗೂ ಅಳಿಯದೆ ಉಳಿಯುತ್ತಿತ್ತು.</verse>
				<verse number="24">ಆದುದರಿಂದ ತೀರ್ಪಿನ ದಿನ ಸೊದೋಮಿನ ಗತಿ ನಿನಗಿಂತ ಸಹನೀಯವಾಗಿರುವುದು ಎಂಬುದು ನಿನಗೆ ತಿಳಿದಿರಲಿ,” ಎಂದರು.</verse>
				<verse number="25">ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.</verse>
				<verse number="26">ಹೌದು, ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.</verse>
				<verse number="27">“ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ; ಪುತ್ರನು ಯಾರೆಂಬುದನ್ನು ಪಿತನೇ ಹೊರತು ಬೇರಾರೂ ಅರಿಯರು. ಪಿತನು ಯಾರು ಎಂಬುದನ್ನು ಪುತ್ರನು ಮತ್ತು ಯಾವನಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ, ಅವರೇ ಹೊರತು ಮತ್ತಾರೂ ಅರಿಯರು.</verse>
				<verse number="28">“ದುಡಿದು, ಭಾರಹೊತ್ತು, ಬಳಲಿ ಬೆಂಡಾಗಿರುವ ಸರ್ವಜನರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ; ನಾನು ನಿಮಗೆ ವಿಶ್ರಾಂತಿಕೊಡುತ್ತೇನೆ.</verse>
				<verse number="29">ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.</verse>
				<verse number="30">ನನ್ನ ನೊಗ ಹಗುರ, ನನ್ನ ಹೊರೆ ಸುಗಮ,” ಎಂದರು.</verse>
			</chapter>
			<chapter number="12">
				<verse number="1">ಒಂದು ಸಬ್ಬತ್ ದಿನ ಯೇಸುಸ್ವಾಮಿ ಗೋದಿಯ ಹೊಲಗಳನ್ನು ಹಾದುಹೋಗುತ್ತಿದ್ದರು. ಅವರ ಸಂಗಡವಿದ್ದ ಶಿಷ್ಯರಿಗೆ ಹಸಿವಾಯಿತು. ಅವರು ಗೋದಿಯ ತೆನೆಗಳನ್ನು ಕಿತ್ತು ತಿನ್ನಲಾರಂಭಿಸಿದರು.</verse>
				<verse number="2">ಇದನ್ನು ಕಂಡ ಫರಿಸಾಯರು, “ನೋಡು, ನೋಡು, ನಿನ್ನ ಶಿಷ್ಯರು ಸಬ್ಬತ್ ದಿನದಲ್ಲಿ ನಿಷಿದ್ಧವಾದುದನ್ನು ಮಾಡುತ್ತಿದ್ದಾರೆ,” ಎಂದರು.</verse>
				<verse number="3">ಅದಕ್ಕೆ ಯೇಸು, “ಹಿಂದೆ ಅರಸ ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಏನು ಮಾಡಿದರೆಂದು ನೀವು ಓದಿರಬೇಕಲ್ಲವೆ?</verse>
				<verse number="4">ಅವನು ದೇವಮಂದಿರದೊಳಕ್ಕೆ ಹೋಗಿ ಯಾಜಕರ ಹೊರತು ತಾನೇ ಆಗಲಿ, ಸಂಗಡಿಗರೇ ಆಗಲಿ, ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿನ್ನಲಿಲ್ಲವೆ?</verse>
				<verse number="5">ಇದಲ್ಲದೆ, ಪ್ರತಿಯೊಂದು ಸಬ್ಬತ್ ದಿನವೂ ಯಾಜಕರು ದೇವಾಲಯದಲ್ಲಿ ಸಬ್ಬತ್ ದಿನದ ನಿಯಮಗಳನ್ನು ಉಲ್ಲಂಘಿಸಿಯೂ ನಿರ್ದೋಷಿಗಳಾಗಿದ್ದಾರೆ. ಇದನ್ನು ನೀವು ಮೋಶೆಯ ಧರ್ಮಶಾಸ್ತ್ರದಲ್ಲಿ ಓದಿಲ್ಲವೆ?</verse>
				<verse number="6">ದೇವಾಲಯಕ್ಕಿಂತಲೂ ಶ್ರೇಷ್ಠವಾದವನು ಇಲ್ಲಿದ್ದಾನೆಂಬುದು ನಿಮಗೆ ತಿಳಿದಿರಲಿ.</verse>
				<verse number="7">‘ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂಬ ವಾಕ್ಯದ ಅರ್ಥ ನಿಮಗೆ ತಿಳಿದಿದ್ದರೆ, ನಿರ್ದೋಷಿಗಳನ್ನು ನೀವು ಖಂಡಿಸುತ್ತಿರಲಿಲ್ಲ.</verse>
				<verse number="8">ಏಕೆಂದರೆ ನರಪುತ್ರನು ಸಬ್ಬತ್ತಿಗೆ ಒಡೆಯ,” ಎಂದರು.</verse>
				<verse number="9">ಯೇಸುಸ್ವಾಮಿ ಅಲ್ಲಿಂದ ಹೊರಟು ಪ್ರಾರ್ಥನಾಮಂದಿರಕ್ಕೆ ಬಂದರು.</verse>
				<verse number="10">ಬತ್ತಿದ ಕೈಯುಳ್ಳ ಒಬ್ಬ ವ್ಯಕ್ತಿ ಅಲ್ಲಿದ್ದನು. ಯೇಸುವಿನ ಮೇಲೆ ತಪ್ಪುಹೊರಿಸುವ ಉದ್ದೇಶದಿಂದ ಕೆಲವರು, “ಸಬ್ಬತ್ ದಿನ ಸ್ವಸ್ಥಗೊಳಿಸುವುದು ಶಾಸ್ತ್ರಬದ್ಧವೇ?\ ಎಂದು ಯೇಸುವನ್ನು ಕೇಳಿದರು.</verse>
				<verse number="11">ಅದಕ್ಕೆ ಯೇಸು, “ನಿಮ್ಮಲ್ಲಿ ಒಬ್ಬನಿಗೆ ಒಂದೇ ಒಂದು ಕುರಿಯಿದೆ ಎನ್ನೋಣ. ಸಬ್ಬತ್ ದಿನ ಅದು ಗುಣಿಯಲ್ಲಿ ಬಿದ್ದುಹೋಯಿತು ಎನ್ನೋಣ; ಆ ದಿನ ಅವನು ಅದನ್ನು ಮೇಲಕ್ಕೆ ಎತ್ತದೆ ಇರುವನೇ?</verse>
				<verse number="12">ಕುರಿಗಿಂತ ನರಮಾನವ ಎಷ್ಟೋ ಮೌಲ್ಯವುಳ್ಳವನಲ್ಲವೇ? ಆದುದರಿಂದ ಸಬ್ಬತ್ ದಿನ ಸತ್ಕಾರ್ಯಮಾಡುವುದು ಶಾಸ್ತ್ರಬದ್ಧವಾದುದು,” ಎಂದರು.</verse>
				<verse number="13">ಅನಂತರ ಬತ್ತಿದ ಕೈಯುಳ್ಳವನನ್ನು ನೋಡಿ, “ಕೈಚಾಚು” ಎಂದರು. ಅವನು ಚಾಚಿದನು. ಅದು ಪುನಶ್ಚೇತನಗೊಂಡು ಇನ್ನೊಂದು ಕೈಯ ಹಾಗೆ ಸಂಪೂರ್ಣ ಸ್ವಸ್ಥವಾಯಿತು.</verse>
				<verse number="14">ಫರಿಸಾಯರಾದರೋ ಅಲ್ಲಿಂದ ಹೊರಗೆ ಹೋಗಿ ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು.</verse>
				<verse number="15">ತಮಗೆ ವಿರುದ್ಧ ಒಳಸಂಚು ನಡೆಯುತ್ತಿದೆ ಎಂದು ಯೇಸುಸ್ವಾಮಿ ಅರಿತುಕೊಂಡು ಅಲ್ಲಿಂದ ಹೊರಟುಹೋದರು.</verse>
				<verse number="16">ಅನೇಕ ಜನರು ಅವರ ಹಿಂದೆಯೇ ಹೋದರು. ಯೇಸು ಅಸ್ವಸ್ಥರಾಗಿದ್ದ ಎಲ್ಲರನ್ನು ಗುಣಪಡಿಸಿದರು ಮತ್ತು ತಮ್ಮ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಆಜ್ಞೆಮಾಡಿದರು.</verse>
				<verse number="17">ಹೀಗೆ ದೇವರು ಪ್ರವಾದಿ ಯೆಶಾಯನ ಮುಖಾಂತರ ಹೇಳಿದ ಈ ವಚನ ನೆರವೇರಿತು:</verse>
				<verse number="18">“ಇದಿಗೋ, ನನ್ನ ದಾಸನು, ನನ್ನಿಂದಾಯ್ಕೆಯಾದವನು, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ನೆಲೆಗೊಳಿಸುವೆ ಇವನಲಿ ಎನ್ನಾತ್ಮವನು; ಸಾರುವನಿವನು ಜಗದಲಿ ನನ್ನ ಧರ್ಮವನು.</verse>
				<verse number="19">ವಾದಿಸುವವನಲ್ಲ, ದನಿಯೆತ್ತಿ ಕೂಗುವವನಲ್ಲ, ಹಾದಿ ಬೀದಿಯಲ್ಲಿವನ ಕಂಠ ಮೊರೆಯುವುದಿಲ್ಲ.</verse>
				<verse number="20">ಮುರಿದ ಜೊಂಡಿನಂತಹ ದುರ್ಬಲರಿಗೀತ ದೀನಬಂಧು ನಂದಿಹೋಗುತಿಹ ದೀನದಲಿತರಿಗೆ ಕೃಪಾಸಿಂಧು ನ್ಯಾಯನೀತಿಗೆ ಜಯ ದೊರಕಿಸದೆ ಬಿಡನಿವನು.</verse>
				<verse number="21">ನೆಮ್ಮುವರು ಅನ್ಯಜನರೆಲ್ಲರು ಇವನ ನಾಮವನು.”</verse>
				<verse number="22">ಬಳಿಕ, ದೆವ್ವಹಿಡಿದು ಕುರುಡನೂ ಮೂಕನೂ ಆಗಿದ್ದ ಒಬ್ಬನನ್ನು ಕೆಲವರು ಯೇಸುಸ್ವಾಮಿಯ ಬಳಿಗೆ ಕರೆತಂದರು. ಯೇಸು ಅವನನ್ನು ಗುಣಪಡಿಸಿದರು. ಅವನಿಗೆ ದೃಷ್ಟಿ ಹಾಗೂ ಮಾತು ಎರಡೂ ಬಂದಿತು. ಅಲ್ಲಿದ್ದ ಜನರೆಲ್ಲರೂ ಬೆರಗಾದರು.</verse>
				<verse number="23">“ಇವರು ದಾವೀದನ ಕುಲಪುತ್ರರಾಗಿರಬಹುದೇ!’ ಎಂದುಕೊಂಡರು.</verse>
				<verse number="24">ಆದರೆ ಫರಿಸಾಯರು ಇದನ್ನು ಕೇಳಿದಾಗ, “ಇವನು ದೆವ್ವಗಳನ್ನು ಬಿಡಿಸುತ್ತಿರುವುದು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದಲೇ,” ಎಂದರು.</verse>
				<verse number="25">ಅವರ ಆಲೋಚನೆಗಳನ್ನು ಅರಿತುಕೊಂಡ ಯೇಸು ಇಂತೆಂದರು: “ಅಂತಃಕಲಹದಿಂದ ಒಡೆದುಹೋಗಿರುವ ಪ್ರತಿಯೊಂದು ರಾಜ್ಯವೂ ನಾಶವಾಗುವುದು; ಅದರಂತೆಯೇ ತಮ್ಮತಮ್ಮೊಳಗೆ ಕಾದಾಡುವ ಊರುಗಳೂ ಕುಟುಂಬಗಳೂ ಹಾಳಾಗುವುವು.</verse>
				<verse number="26">ಸೈತಾನನು ಸೈತಾನನನ್ನು ಹೊಡೆದೋಡಿಸುವುದಾದರೆ, ಸೈತಾನನ ಪಕ್ಷದವರೇ ಪರಸ್ಪರ ವಿರೋಧಿಗಳಾಗುತ್ತಾರೆ.</verse>
				<verse number="27">ಆಗ ಅವನ ರಾಜ್ಯ ಹೇಗೆ ತಾನೇ ಉಳಿದೀತು? ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಶಕ್ತಿಯಿಂದ ಬಿಡಿಸುತ್ತಾರೆ? ಆದ್ದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು.</verse>
				<verse number="28">ನಾನು ದೇವರ ಆತ್ಮದಿಂದ ದೆವ್ವಗಳನ್ನು ಬಿಡಿಸುವುದಾದರೆ, ದೇವರ ಸಾಮ್ರಾಜ್ಯ ನಿಮ್ಮಲ್ಲಿಗೆ ಈಗಾಗಲೇ ಬಂದಿದೆ.</verse>
				<verse number="29">“ಒಬ್ಬ ಬಲಿಷ್ಠನ ಮನೆಯನ್ನು ನುಗ್ಗಿ ಅವನನ್ನು ಕಟ್ಟಿಹಾಕದೆ ಅವನ ಸೊತ್ತನ್ನು ಸೂರೆಮಾಡಲಾದೀತೇ? ಮೊದಲು ಅವನನ್ನು ಕಟ್ಟಬೇಕು. ಬಳಿಕ ಅವನ ಮನೆಯನ್ನು ಕೊಳ್ಳೆಹೊಡೆಯಬೇಕು.</verse>
				<verse number="30">ನನ್ನ ಪರವಾಗಿ ಇಲ್ಲದವನು ನನಗೆ ವಿರೋಧಿಯೇ ಸರಿ. ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ.</verse>
				<verse number="31">“ಮಾನವರು ಮಾಡುವ ಪ್ರತಿಯೊಂದು ಪಾಪಕ್ಕೂ ಆಡುವ ದೇವದೂಷಣೆಗೂ ಕ್ಷಮೆ ಉಂಟು. ಆದರೆ ಪವಿತ್ರಾತ್ಮನ ವಿರುದ್ಧ ಆಡುವ ದೂಷಣೆಗೆ ಕ್ಷಮೆಯೇ ಇಲ್ಲ.</verse>
				<verse number="32">ಯಾರಾದರೂ ನರಪುತ್ರನ ವಿರುದ್ಧ ಮಾತಾಡಿದರೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಇಹದಲ್ಲೇ ಆಗಲಿ, ಪರದಲ್ಲೇ ಆಗಲಿ ಕ್ಷಮೆ ದೊರಕದು.</verse>
				<verse number="33">“ಒಳ್ಳೆಯ ಹಣ್ಣು ಬೇಕಾದರೆ ಮರ ಒಳ್ಳೆಯದಿರಬೇಕು. ಹುಳುಕು ಮರವಾದರೆ ಸಿಗುವುದು ಹುಳುಕು ಹಣ್ಣೇ. ಹಣ್ಣಿನ ರುಚಿಯಿಂದ ಮರವನ್ನು ಗುರುತಿಸಬಹುದು.</verse>
				<verse number="34">ಎಲೈ ವಿಷಸರ್ಪಗಳ ಪೀಳಿಗೆಯೇ, ಕೆಟ್ಟವರಾಗಿರುವ ನಿಮ್ಮ ಬಾಯಿಂದ ಒಳ್ಳೆಯ ಮಾತು ಬರಲು ಸಾಧ್ಯವೇ? ಹೃದಯದಲ್ಲಿ ತುಂಬಿತುಳುಕುವುದನ್ನೇ ನಾಲಿಗೆ ನುಡಿಯುತ್ತದೆ.</verse>
				<verse number="35">ಒಳ್ಳೆಯವನು ತನ್ನ ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ತನ್ನ ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.</verse>
				<verse number="36">ಜನರು ತಾವಾಡುವ ಪ್ರತಿಯೊಂದು ಜೊಳ್ಳುಮಾತಿಗೂ ತೀರ್ಪಿನ ದಿನ ಲೆಕ್ಕಕೊಡಬೇಕಾಗುವುದು ಎಂಬುದು ನಿಮಗೆ ತಿಳಿದಿರಲಿ.</verse>
				<verse number="37">ನಿನ್ನ ಮಾತುಗಳಿಂದಲೇ ನೀನು ನಿರಪರಾಧಿಯೆಂದು ನಿರ್ಧರಿಸಲಾಗುವುದು; ಅಥವಾ ಅಪರಾಧಿಯೆಂದು ಆಪಾದಿಸಲಾಗುವುದು,” ಎಂದರು.</verse>
				<verse number="38">ಬಳಿಕ ಕೆಲವುಮಂದಿ ಧರ್ಮಶಾಸ್ತ್ರಿಗಳೂ ಫರಿಸಾಯರೂ ಯೇಸುಸ್ವಾಮಿಯನ್ನು ಉದ್ದೇಶಿಸಿ, “ಬೋಧಕರೇ, ನೀವು ಒಂದು ಸೂಚಕಕಾರ್ಯ ಮಾಡುವುದನ್ನು ನೋಡಬೇಕೆಂದಿದ್ದೇವೆ,” ಎಂದರು.</verse>
				<verse number="39">ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಇಂತೆಂದರು: “ಈ ಕೆಟ್ಟ ಹಾಗೂ ದೈವಭ್ರಷ್ಟ ಪೀಳಿಗೆ ಸೂಚಕಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು.</verse>
				<verse number="40">ಯೋನನು ಮೂರುದಿನ ಹಗಲು ರಾತ್ರಿ ದೊಡ್ಡ ಮೀನಿನ ಉದರದಲ್ಲಿದ್ದನು. ಅದರಂತೆಯೇ ನರಪುತ್ರನು ಮೂರುದಿನ ಹಗಲು ರಾತ್ರಿ ಭೂಗರ್ಭದಲ್ಲಿರುವನು.</verse>
				<verse number="41">ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಅವರು ಪಾಪಕ್ಕೆ ವಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.</verse>
				<verse number="42">ಅದೇ ತೀರ್ಪಿನ ದಿನ ದಕ್ಷಿಣ ದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿಯೆಂದು ಖಂಡಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೂರ ದೇಶದಿಂದ ಬಂದಳು. ಆದರೆ ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.</verse>
				<verse number="43">“ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ತೊಲಗಿದ ಮೇಲೆ ನೆಲೆಯನ್ನು ಹುಡುಕುತ್ತಾ ಒಣಗಾಡಿನಲ್ಲಿ ಅಲೆದಾಡುತ್ತದೆ. ಅದಕ್ಕೆ ನೆಲೆ ಸಿಗದಾಗ, ಅದು, ‘ನಾನು ಬಿಟ್ಟುಬಂದ ಮನೆಗೆ ಹಿಂದಿರುಗುತ್ತೇನೆ’ ಎಂದು ಹೇಳಿಕೊಳ್ಳುತ್ತದೆ.</verse>
				<verse number="44">ಅದು ಮರಳಿ ಬಂದಾಗ, ಮನೆ ಬರಿದಾಗಿರುವುದನ್ನೂ ಗುಡಿಸಿರುವುದನ್ನೂ ಎಲ್ಲವೂ ಚೊಕ್ಕಟ ಆಗಿರುವುದನ್ನೂ ಕಾಣುತ್ತದೆ.</verse>
				<verse number="45">ಪುನಃ ಹೊರಟುಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಡನೆ ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳಹೊಕ್ಕು ನೆಲಸುತ್ತವೆ. ಆಗ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗಿಳಿಯುತ್ತದೆ. ಈ ದುಷ್ಟ ಪೀಳಿಗೆಗೆ ಸಂಭವಿಸುವ ಗತಿಯೂ ಅದೇ,” ಎಂದರು.</verse>
				<verse number="46">ಯೇಸುಸ್ವಾಮಿ ತಮ್ಮನ್ನು ಸುತ್ತುವರಿದಿದ್ದ ಜನರಿಗೆ ಇನ್ನೂ ಬೋಧನೆ ಮಾಡುತ್ತಿದ್ದರು. ಆಗ ಅವರ ತಾಯಿ ಮತ್ತು ಸಹೋದರರು ಬಂದು ಅವರೊಡನೆ ಮಾತನಾಡಬಯಸಿ ಹೊರಗೆ ನಿಂತಿದ್ದರು.</verse>
				<verse number="47">“ನಿಮ್ಮ ತಾಯಿ ಮತ್ತು ಸಹೋದರರು ಹೊರಗೆ ನಿಂತಿದ್ದಾರೆ; ನಿಮ್ಮೊಡನೆ ಮಾತನಾಡಬೇಕೆಂದಿದ್ದಾರೆ,” ಎಂದು ಒಬ್ಬನು ತಿಳಿಸಿದನು.</verse>
				<verse number="48">ಅದಕ್ಕೆ ಯೇಸು, “ನನ್ನ ತಾಯಿ ಯಾರು? ನನ್ನ ಸಹೋದರರು ಯಾರು?” ಎನ್ನುತ್ತಾ, ತಮ್ಮ ಶಿಷ್ಯರ ಕಡೆಗೆ ಕೈತೋರಿಸಿ,</verse>
				<verse number="49">ಇಗೋ ನೋಡು, ನನ್ನ ತಾಯಿ; ನನ್ನ ಸಹೋದರರು;</verse>
				<verse number="50">ಸ್ವರ್ಗದಲ್ಲಿರುವ ನನ್ನ ತಂದೆಯ‍ ಚಿತ್ತವನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ ಮತ್ತು ತಾಯಿ,” ಎಂದರು.</verse>
			</chapter>
			<chapter number="13">
				<verse number="1">ಅದೇ ದಿನ ಯೇಸುಸ್ವಾಮಿ ಮನೆಯಿಂದ ಹೊರಟು ಸರೋವರದ ತೀರದಲ್ಲಿ ಕುಳಿತರು.</verse>
				<verse number="2">ಜನರು ತಂಡೋಪತಂಡವಾಗಿ ಕೂಡಿಬಂದುದರಿಂದ ದೋಣಿ ಹತ್ತಿ ಕುಳಿತುಕೊಳ್ಳಬೇಕಾಯಿತು. ಜನರು ದಡದಲ್ಲೇ ನಿಂತರು.</verse>
				<verse number="3">ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಸಾಮತಿಯ ರೂಪದಲ್ಲಿ ಹೇಳಿದರು:</verse>
				<verse number="4">“ಒಬ್ಬ ರೈತ ಬಿತ್ತುವುದಕ್ಕೆ ಹೋದ. ಬಿತ್ತನೆ ಮಾಡುತ್ತಿದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಬಿದ್ದದ್ದೇ ಹಕ್ಕಿಗಳು ಬಂದು ಆ ಬೀಜವನ್ನು ತಿಂದುಬಿಟ್ಟವು.</verse>
				<verse number="5">ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಕಲ್ಲು ನೆಲದ ಮೇಲೆ ಬಿದ್ದವು. ಅಲ್ಲಿ ಮಣ್ಣು ತೆಳ್ಳಗಿದ್ದುದರಿಂದ ಅವು ಬೇಗನೆ ಮೊಳೆತವು.</verse>
				<verse number="6">ಆದರೆ ಬಿಸಿಲೇರಿದಾಗ ಬಾಡಿದವು. ಬೇರು ಬಲವಾಗಿಲ್ಲದ ಕಾರಣ ಒಣಗಿಹೋದವು.</verse>
				<verse number="7">ಮತ್ತೆ ಕೆಲವು ಬೀಜಗಳು ಮುಳ್ಳುಪೊದೆಗಳ ನಡುವೆ ಬಿದ್ದವು. ಆ ಪೊದೆಗಳು ಸಸ್ಯಗಳ ಸಮೇತ ಬೆಳೆದು, ಅವುಗಳನ್ನು ಅಡಗಿಸಿಬಿಟ್ಟವು.</verse>
				<verse number="8">ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು, ತೆನೆಬಿಟ್ಟವು. ಕೆಲವು ನೂರರಷ್ಟು ಮತ್ತೆ ಕೆಲವು ಅರವತ್ತರಷ್ಟು, ಇನ್ನು ಕೆಲವು ಮೂವತ್ತರಷ್ಟು ಫಸಲನ್ನು ಕೊಟ್ಟವು.</verse>
				<verse number="9">ಕೇಳಲು ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದು ಒತ್ತಿ ಹೇಳಿದರು.</verse>
				<verse number="10">ತರುವಾಯ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ನೀವು ಜನರೊಡನೆ ಮಾತನಾಡುವಾಗ ಸಾಮತಿಗಳನ್ನು ಉಪಯೋಗಿಸುತ್ತೀರಿ, ಏಕೆ?” ಎಂದು ಕೇಳಿದರು.</verse>
				<verse number="11">ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸ್ವರ್ಗಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶ ಲಭಿಸಿರುವುದು ನಿಮಗೆ, ಅವರಿಗಲ್ಲ.</verse>
				<verse number="12">ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ.</verse>
				<verse number="13">ಅವರೊಡನೆ ಸಾಮತಿ ರೂಪದಲ್ಲಿ ಮಾತನಾಡುವುದಕ್ಕೆ ಕಾರಣ ಇದು: ಅವರು ಕಣ್ಣಾರೆ ನೋಡಿದರೂ ಕಾಣುವುದಿಲ್ಲ; ಕಿವಿಯಾರೆ ಕೇಳಿದರೂ ಕಿವಿಗೊಡುವುದಿಲ್ಲ; ಗ್ರಹಿಸುವುದೂ ಇಲ್ಲ.</verse>
				<verse number="14">ಪ್ರವಾದಿ ಯೆಶಾಯನ ಈ ಪ್ರವಚನ ಅವರಲ್ಲಿ ಈಡೇರುತ್ತದೆ. ‘ಕೇಳಿ ಕೇಳಿಯೂ ಗ್ರಹಿಸರು ನೋಡಿ ನೋಡಿಯೂ ಕಾಣರು</verse>
				<verse number="15">ಈ ಜನರ ಹೃದಯ ಕಲ್ಲಾಗಿದೆ ಕಿವಿ ಮಂದವಾಗಿದೆ ಕಣ್ಣು ಮಬ್ಬಾಗಿದೆ. ಇಲ್ಲದಿದ್ದರೆ ಇವರ ಕಣ್ಣು ಕಾಣುತ್ತಾ ಕಿವಿ ಕೇಳುತ್ತಾ ಹೃದಯ ಗ್ರಹಿಸುತ್ತಾ ನನ್ನತ್ತ ತಿರುಗುತ್ತಿದ್ದರು; ದೇವರಾದ ನಾನಿವರನು ಸ್ವಸ್ಥಪಡಿಸುತ್ತಿದ್ದೆನು.’</verse>
				<verse number="16">“ನೀವಾದರೋ ಭಾಗ್ಯವಂತರು. ನಿಮ್ಮ ಕಣ್ಣುಗಳು ಕಾಣುತ್ತವೆ, ಕಿವಿಗಳು ಕೇಳುತ್ತವೆ.</verse>
				<verse number="17">ಎಷ್ಟೋ ಪ್ರವಾದಿಗಳು ಹಾಗೂ ಸತ್ಪುರುಷರು ನೀವು ನೋಡುವುದನ್ನು ನೋಡುವುದಕ್ಕೂ, ಕೇಳುವುದನ್ನು ಕೇಳುವುದಕ್ಕೂ ಅಪೇಕ್ಷಿಸಿದರು. ಆದರೆ ಅವರು ನೋಡಲೂ ಇಲ್ಲ, ಕೇಳಲೂ ಇಲ್ಲ ಎಂಬುದು ನಿಮಗೆ ತಿಳಿದಿರಲಿ.</verse>
				<verse number="18">“ಈಗ ಬಿತ್ತುವವನ ಸಾಮತಿಯ ಅರ್ಥವನ್ನು ಕೇಳಿ:</verse>
				<verse number="19">ಒಬ್ಬನು ಶ್ರೀಸಾಮ್ರಾಜ್ಯದ ಸಂದೇಶವನ್ನು ಕೇಳಿ ಅದನ್ನು ಗ್ರಹಿಸದೆಹೋದರೆ, ಕೇಡಿಗನು ಬಂದು ಅವನ ಹೃದಯದಲ್ಲಿ ಬಿತ್ತಿದ್ದ ಬೀಜವನ್ನು ತೆಗೆದೆಸೆಯುತ್ತಾನೆ. ಇವನು ಕಾಲ್ದಾರಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.</verse>
				<verse number="20">ಬೇರೊಬ್ಬನು ಈ ಸಂದೇಶವನ್ನು ಕೇಳಿದ ಕೂಡಲೇ ಅದನ್ನು ಸಂತೋಷದಿಂದ ಸ್ವೀಕರಿಸುತ್ತಾನೆ.</verse>
				<verse number="21">ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ.</verse>
				<verse number="22">ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ; ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.</verse>
				<verse number="23">ಇನ್ನೊಬ್ಬನು ವಾಕ್ಯವನ್ನು ಕೇಳುತ್ತಾನೆ, ಗ್ರಹಿಸಿಕೊಳ್ಳುತ್ತಾನೆ; ಫಲಪ್ರದನಾಗಿ ನೂರರಷ್ಟು, ಅರವತ್ತರಷ್ಟು, ಮೂವತ್ತರಷ್ಟು ಫಲಕೊಡುತ್ತಾನೆ. ಇವನು ಹದವಾದ ಭೂಮಿಯಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ,” ಎಂದರು.</verse>
				<verse number="24">ಯೇಸುಸ್ವಾಮಿ ಜನರಿಗೆ ಮತ್ತೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯವು ತನ್ನ ಹೊಲದಲ್ಲಿ ಒಳ್ಳೆಯ ಗೋದಿಯನ್ನು ಬಿತ್ತಿದ ರೈತನನ್ನು ಹೋಲುತ್ತದೆ.</verse>
				<verse number="25">ಒಂದು ರಾತ್ರಿ ಎಲ್ಲರೂ ನಿದ್ರಿಸುತ್ತಿರುವಾಗ, ಅವನ ವೈರಿ ಬಂದು, ಗೋದಿಯ ನಡುವೆ ಕಳೆಗಳನ್ನು ಬಿತ್ತಿ ಹೋದ.</verse>
				<verse number="26">ಗೋದಿ ಬೆಳೆದು ತೆನೆಬಿಟ್ಟಾಗ ಕಳೆ ಬೆಳೆದಿರುವುದೂ ಗೋಚರವಾಯಿತು.</verse>
				<verse number="27">ಆಗ ಆಳುಗಳು ತಮ್ಮ ಯಜಮಾನನ ಬಳಿಗೆ ಬಂದು, ‘ಸ್ವಾಮೀ, ನಿಮ್ಮ ಹೊಲದಲ್ಲಿ ಬಿತ್ತಿದ್ದು ಉತ್ತಮವಾದ ಗೋದಿ ಅಲ್ಲವೆ? ಜೊತೆಗೆ ಕಳೆಯೂ ಕಾಣಿಸಿಕೊಂಡಿದೆಯಲ್ಲಾ. ಅದೆಲ್ಲಿಂದ ಬಂತು?’ ಎಂದರು.</verse>
				<verse number="28">ಯಜಮಾನ, ‘ಇದು ನನ್ನ ವೈರಿ ಮಾಡಿರುವ ಕೆಲಸ,’ ಎಂದ. ‘ಹಾಗಾದರೆ, ಕಳೆಯನ್ನು ಕಿತ್ತುಹಾಕೋಣವೇ’ ಎಂದರು ಆಳುಗಳು.</verse>
				<verse number="29">ಅದಕ್ಕೆ ಯಜಮಾನ, ‘ಬೇಡ, ಬೇಡ; ಕಳೆಯನ್ನು ಕೀಳುವಾಗ, ಗೋದಿಯನ್ನೂ ಕಿತ್ತುಬಿಟ್ಟೀರಿ.</verse>
				<verse number="30">ಸುಗ್ಗಿಯವರೆಗೆ ಎರಡೂ ಒಟ್ಟಿಗೆ ಬೆಳೆಯಲಿ; ಸುಗ್ಗಿಯ ಕಾಲದಲ್ಲಿ ಮೊದಲು ಕಳೆ ಕಿತ್ತು, ಸುಟ್ಟುಹಾಕಲು ಕಟ್ಟಿಡಿ; ಬಳಿಕ ಗೋದಿಯನ್ನು ಒಕ್ಕಣೆಮಾಡಿ ನನ್ನ ಕಣಜಕ್ಕೆ ತುಂಬಿರಿ, ಎಂದು ಕೊಯ್ಲುಗಾರರಿಗೆ ಹೇಳುತ್ತೇನೆ,’ ಎಂದ.”</verse>
				<verse number="31">ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: “ಸ್ವರ್ಗಸಾಮ್ರಾಜ್ಯ ಒಂದು ಸಾಸಿವೆ ಕಾಳನ್ನು ಹೋಲುತ್ತದೆ; ಈ ಕಾಳನ್ನು ತೆಗೆದುಕೊಂಡು ಹೋಗಿ ರೈತ ತನ್ನ ಹೊಲದಲ್ಲಿ ಬಿತ್ತಿದ.</verse>
				<verse number="32">ಕಾಳುಗಳಲ್ಲಿ ಅತಿ ಸಣ್ಣದಾದ ಇದನ್ನು ಬಿತ್ತಿದಾಗ ಎಲ್ಲ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆದು ಮರವಾಗುತ್ತದೆ. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಬಂದು ಇದರ ರೆಂಬೆಗಳಲ್ಲಿ ಗೂಡು ಕಟ್ಟಿ ವಾಸಿಸುತ್ತವೆ.”</verse>
				<verse number="33">ಯೇಸುಸ್ವಾಮಿ ಮತ್ತೊಂದು ಸಾಮತಿಯನ್ನು ಜನರಿಗೆ ಹೇಳಿದರು: “ಸ್ವರ್ಗಸಾಮ್ರಾಜ್ಯ ಹುದುಗೆಬ್ಬಿಸುವ ಹುಳಿಯನ್ನು ಹೋಲುತ್ತದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು.”</verse>
				<verse number="34">ಇದೆಲ್ಲವನ್ನೂ ಯೇಸುಸ್ವಾಮಿ ಜನರಿಗೆ ಸಾಮತಿಗಳ ರೂಪದಲ್ಲಿ ಹೇಳಿದರು. ಸಾಮತಿಗಳಿಲ್ಲದೆ ಅವರಿಗೆ ಏನನ್ನೂ ಬೋಧಿಸಲಿಲ್ಲ.</verse>
				<verse number="35">“ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು” ಎಂದು ದೇವರು ಪ್ರವಾದಿಯ ಮುಖಾಂತರ ತಿಳಿಸಿದ್ದ ಪ್ರವಚನವನ್ನು ಯೇಸು ಹೀಗೆ ನೆರವೇರಿಸಿದರು.</verse>
				<verse number="36">ಯೇಸುಸ್ವಾಮಿ ಜನರನ್ನು ಬೀಳ್ಕೊಟ್ಟು ಮನೆಗೆ ಬಂದರು. ಶಿಷ್ಯರು ಅವರ ಬಳಿಗೆ ಬಂದು, “ಹೊಲದಲ್ಲಿ ಬಿತ್ತಲಾದ ಕಳೆಗಳ ಸಾಮತಿಯನ್ನು ನಮಗೆ ವಿವರಿಸಿರಿ,” ಎಂದು ಕೇಳಿಕೊಂಡರು.</verse>
				<verse number="37">ಅದಕ್ಕೆ ಯೇಸು, “ಒಳ್ಳೆಯ ಗೋದಿಯನ್ನು ಬಿತ್ತುವವನು ಎಂದರೆ ನರಪುತ್ರನು;</verse>
				<verse number="38">ಹೊಲವೇ ಈ ಲೋಕ; ಒಳ್ಳೆಯ ಕಾಳುಗಳೇ ಶ್ರೀಸಾಮ್ರಾಜ್ಯದ ಮಕ್ಕಳು; ಕಳೆಗಳೇ ಕೇಡಿಗನ ಮಕ್ಕಳು.</verse>
				<verse number="39">ಆ ಕಳೆಗಳನ್ನು ಬಿತ್ತಿದ ವೈರಿಯೇ ಪಿಶಾಚಿ. ಸುಗ್ಗಿಯೇ ಕಾಲಾಂತ್ಯ. ಕೊಯ್ಲುಗಾರರೇ ದೇವದೂತರು.</verse>
				<verse number="40">ಕಳೆಗಳನ್ನು ಕಿತ್ತು ಬೆಂಕಿಯಲ್ಲಿ ಸುಟ್ಟುಹಾಕಿದಂತೆ ಕಾಲಾಂತ್ಯದಲ್ಲೂ ನಡೆಯುವುದು.</verse>
				<verse number="41">ನರಪುತ್ರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದಿಂದ ಪಾಪಕ್ಕೆ ಕಾರಣವಾದುದೆಲ್ಲವನ್ನೂ</verse>
				<verse number="42">ಮತ್ತು ದುಷ್ಕರ್ಮಿಗಳೆಲ್ಲರನ್ನೂ ಒಟ್ಟುಗೂಡಿಸಿ ಅಗ್ನಿಕುಂಡದಲ್ಲಿ ಹಾಕುವರು; ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.</verse>
				<verse number="43">ಸದ್ಧರ್ಮಿಗಳು ತಮ್ಮ ತಂದೆಯ ಸಾಮ್ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕಿವಿಯುಳ್ಳವನು ಕೇಳಿಸಿಕೊಳ್ಳಲಿ!</verse>
				<verse number="44">“ಸ್ವರ್ಗಸಾಮ್ರಾಜ್ಯವನ್ನು ಹೊಲದಲ್ಲಿ ಹೂಳಿಟ್ಟ ನಿಧಿಗೆ ಹೋಲಿಸಬಹುದು. ಇದನ್ನು ಒಬ್ಬನು ಪತ್ತೆಹಚ್ಚಿ ಅಲ್ಲಿಯೇ ಮುಚ್ಚಿಡುತ್ತಾನೆ. ತನಗಾದ ಸಂತೋಷದಿಂದ ಹೋಗಿ ತನಗೆ ಇದ್ದುಬದ್ದುದೆಲ್ಲವನ್ನೂ ಮಾರಿ ಈ ಹೊಲವನ್ನೇ ಕೊಂಡುಕೊಂಡುಬಿಡುತ್ತಾನೆ.</verse>
				<verse number="45">“ಸ್ವರ್ಗಸಾಮ್ರಾಜ್ಯವನ್ನು ಉತ್ತಮವಾದ ಮುತ್ತುರತ್ನಗಳನ್ನು ಹುಡುಕಿಕೊಂಡು ಹೋಗುವ ವರ್ತಕನಿಗೂ ಹೋಲಿಸಬಹುದು.</verse>
				<verse number="46">ಅನರ್ಘ್ಯವಾದ ಒಂದು ಮುತ್ತನ್ನು ಕಂಡ ಕೂಡಲೆ ವರ್ತಕ ತನ್ನ ಆಸ್ತಿಪಾಸ್ತಿಯನ್ನು ಮಾರಿ ಆ ಮುತ್ತನ್ನು ಕೊಂಡುಕೊಳ್ಳುತ್ತಾನೆ.</verse>
				<verse number="47">“ಸ್ವರ್ಗಸಾಮ್ರಾಜ್ಯವನ್ನು ಒಂದು ಮೀನು ಬಲೆಗೆ ಹೋಲಿಸಬಹುದು. ಬೆಸ್ತರು ಬಲೆಯನ್ನು ಸಮುದ್ರದಲ್ಲಿ ಬೀಸಿ ಎಲ್ಲಾ ಜಾತಿಯ ಮೀನುಗಳನ್ನು ಹಿಡಿಯುತ್ತಾರೆ.</verse>
				<verse number="48">ಬಲೆ ತುಂಬಿದ ಮೇಲೆ ಅದನ್ನು ದಡಕ್ಕೆ ಎಳೆದು, ಕುಳಿತುಕೊಂಡು ಒಳ್ಳೆಯ ಮೀನುಗಳನ್ನು ಮಾತ್ರ ಆರಿಸಿಕೊಂಡು ಬುಟ್ಟಿಗೆ ಹಾಕಿಕೊಳ್ಳುತ್ತಾರೆ; ಕೆಟ್ಟವನ್ನು ಎಸೆದುಬಿಡುತ್ತಾರೆ.</verse>
				<verse number="49">ಕಾಲಾಂತ್ಯದಲ್ಲಿ ಇದರಂತೆಯೇ ಆಗುವುದು; ದೇವದೂತರು ಹೊರಟುಬಂದು ದುರ್ಜನರನ್ನು ಸಜ್ಜನರಿಂದ ಬೇರ್ಪಡಿಸುವರು. ದುರ್ಜನರನ್ನು ಅಗ್ನಿಕುಂಡದಲ್ಲಿ ಹಾಕುವರು.</verse>
				<verse number="50">ಅಲ್ಲಿ ಅವರು ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡುವರು.”</verse>
				<verse number="51">“ಇದೆಲ್ಲ ನಿಮಗೆ ಅರ್ಥವಾಯಿತೇ?” ಎಂದು ಯೇಸುಸ್ವಾಮಿ ಕೇಳಿದರು. ಶಿಷ್ಯರು “ಅರ್ಥವಾಯಿತು” ಎಂದರು.</verse>
				<verse number="52">ಆಗ ಯೇಸು, “ಇಂತಿರಲು, ಸ್ವರ್ಗಸಾಮ್ರಾಜ್ಯದಲ್ಲಿ ಶಿಷ್ಯನಾಗಿರುವ ಪ್ರತಿಯೊಬ್ಬ ಶಾಸ್ತ್ರಜ್ಞನು ಮನೆಯ ಯಜಮಾನ ಇದ್ದ ಹಾಗೆ. ಅವನು ತನ್ನ ಉಗ್ರಾಣದಿಂದ ಹೊಸ ಹಾಗೂ ಹಳೆಯ ವಸ್ತುಗಳನ್ನು ಹೊರಗೆ ತರುತ್ತಾ ಇರುತ್ತಾನೆ,” ಎಂದರು.</verse>
				<verse number="53">ಈ ಸಾಮತಿಗಳನ್ನು ಹೇಳಿಯಾದಮೇಲೆ ಯೇಸುಸ್ವಾಮಿ ಅಲ್ಲಿಂದ ಹೊರಟುಹೋದರು.</verse>
				<verse number="54">ತಮ್ಮ ಸ್ವಂತ ಊರಿಗೆ ಮರಳಿ ಬಂದು ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಬೋಧನೆಮಾಡಿದರು. ಅದನ್ನು ಕೇಳುತ್ತಿದ್ದ ಜನರು ಆಶ್ಚರ್ಯಚಕಿತರಾಗಿ, “ಈ ಪರಿಜ್ಞಾನ ಇವನಿಗೆಲ್ಲಿಂದ ಬಂತು? ಈ ಮಹತ್ಕಾರ್ಯಗಳನ್ನು ಇವನು ಮಾಡುವುದಾದರೂ ಹೇಗೆ?</verse>
				<verse number="55">ಇವನು ಆ ಬಡಗಿಯ ಮಗನಲ್ಲವೇ? ಮರಿಯಳು ಇವನ ತಾಯಲ್ಲವೇ? ಯಕೋಬ, ಜೋಸೆಫ್, ಸಿಮೋನ, ಯೂದ ಇವರು ಇವನ ಸೋದರರಲ್ಲವೇ?</verse>
				<verse number="56">ಇವನ ಸೋದರಿಯರೆಲ್ಲಾ ಇಲ್ಲೇ ವಾಸಮಾಡುತ್ತಿಲ್ಲವೇ? ಹಾಗಾದರೆ ಇವನಿಗೆ ಇದೆಲ್ಲಾ ಎಲ್ಲಿಂದ ಬಂತು?” ಎಂದು ಮಾತಾಡಿಕೊಂಡು ಯೇಸುವನ್ನು ತಿರಸ್ಕರಿಸಿದರು.</verse>
				<verse number="57">ಅವರಿಗೆ ಯೇಸು, “ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು; ಆದರೆ ಸ್ವಗ್ರಾಮದಲ್ಲಿ ಹಾಗೂ ಸ್ವಗೃಹದಲ್ಲಿ ಮಾತ್ರ ಗೌರವ ದೊರಕದು,” ಎಂದು ಹೇಳಿದರು.</verse>
				<verse number="58">ಅವರ ಅವಿಶ್ವಾಸದ ಕಾರಣ ಯೇಸು ಅದ್ಭುತಕಾರ್ಯಗಳನ್ನು ಅಲ್ಲಿ ಹೆಚ್ಚಾಗಿ ಮಾಡಲಿಲ್ಲ.</verse>
			</chapter>
			<chapter number="14">
				<verse number="1">ಯೇಸುಸ್ವಾಮಿಯ ಸಮಾಚಾರ ಆಗ ಗಲಿಲೇಯ ಪ್ರಾಂತ್ಯಕ್ಕೆ ಸಾಮಂತರಾಜನಾಗಿದ್ದ ಹೆರೋದನ ಕಿವಿಗೆ ಬಿದ್ದಿತು.</verse>
				<verse number="2">ಅವನು ತನ್ನ ಪರಿಚಾರಕರಿಗೆ, “ಮಡಿದ ಸ್ನಾನಿಕ ಯೊವಾನ್ನನೇ ಮರಳಿ ಜೀವಂತವಾಗಿ ಬಂದಿದ್ದಾನೆ; ಆದ್ದರಿಂದಲೇ ಮಹತ್ಕಾರ್ಯಗಳನ್ನು ಮಾಡುವ ಶಕ್ತಿ ಇವನಿಗಿದೆ,” ಎಂದನು</verse>
				<verse number="3">ಹೆರೋದನು ತನ್ನ ಸಹೋದರ ಫಿಲಿಪ್ಪನ ಧರ್ಮಪತ್ನಿಯಾದ ಹೆರೋದಿಯಳನ್ನು ಇಟ್ಟುಕೊಂಡಿದ್ದನು. ಅವಳ ಪ್ರಯುಕ್ತ ಯೊವಾನ್ನನನ್ನು ಹಿಡಿದು ಬಂಧಿಸಿ ಸೆರೆಯಲ್ಲಿ ಹಾಕಿದ್ದನು.</verse>
				<verse number="4">ಏಕೆಂದರೆ ಆತನು, ‘ನಿನ್ನ ಸಹೋದರನ ಧರ್ಮಪತ್ನಿಯನ್ನು ನೀನು ಇಟ್ಟುಕೊಂಡಿರುವುದು ಅಕ್ರಮ,” ಎಂದು ಹೆರೋದನಿಗೆ ಹೇಳುತ್ತಿದ್ದನು.</verse>
				<verse number="5">ಯೊವಾನ್ನನನ್ನು ಕೊಲ್ಲಿಸಬೇಕೆಂದಿದ್ದರೂ ಹೆರೋದನು ಜನರಿಗೆ ಹೆದರಿದ್ದನು. ಅವರು ಆತನನ್ನು ಪ್ರವಾದಿಯೆಂದು ಭಾವಿಸಿದ್ದರು.</verse>
				<verse number="6">ಹೀಗಿರುವಲ್ಲಿ ಹೆರೋದನ ಹುಟ್ಟುಹಬ್ಬ ಬಂದಿತು. ಹೆರೋದಿಯಳ ಮಗಳು ಆಹ್ವಾನಿತರ ಮುಂದೆ ನರ್ತನಮಾಡಿ ಹೆರೋದನನ್ನು ಮೆಚ್ಚಿಸಿದಳು.</verse>
				<verse number="7">ಆಗ ಅವಳು ಏನು ಕೇಳಿದರೂ ಕೊಡುವುದಾಗಿ ಅವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದನು.</verse>
				<verse number="8">ಅವಳು ತನ್ನ ತಾಯಿಯ ಸಲಹೆ ಪಡೆದು, “ನನಗೆ ಸ್ನಾನಿಕ ಯೊವಾನ್ನನ ತಲೆಯನ್ನು ಒಂದು ತಟ್ಟೆಯಲ್ಲಿ ತರಿಸಿಕೊಡಿ,” ಎಂದಳು.</verse>
				<verse number="9">ಇದನ್ನು ಕೇಳಿ ರಾಜನಿಗೆ ವ್ಯಥೆಯಾಯಿತು. ಆದರೆ ಅತಿಥಿಗಳ ಮುಂದೆ ಮಾಡಿದ ಪ್ರಮಾಣ ಮುರಿಯಲಾಗದೆ ಅವಳ ಇಚ್ಛೆಯನ್ನು ಪೂರೈಸುವಂತೆ ಆಜ್ಞೆಮಾಡಿದನು.</verse>
				<verse number="10">ಅದರಂತೆಯೇ ಆಳುಗಳನ್ನು ಕಳುಹಿಸಿ, ಸೆರೆಮನೆಯಲ್ಲಿದ್ದ ಯೊವಾನ್ನನ ತಲೆಯನ್ನು ಕಡಿಸಿದನು;</verse>
				<verse number="11">ಅದನ್ನು ಒಂದು ತಟ್ಟೆಯಲ್ಲಿ ತಂದು ಆ ಹುಡುಗಿಗೆ ಕೊಡಲಾಯಿತು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು.</verse>
				<verse number="12">ಯೊವಾನ್ನನ ಶಿಷ್ಯರು ಶವವನ್ನು ತೆಗೆದುಕೊಂಡುಹೋಗಿ ಸಮಾಧಿಮಾಡಿದರು. ಅನಂತರ ಹೋಗಿ ಯೇಸುವಿಗೆ ಈ ವಿಷಯವನ್ನು ತಿಳಿಸಿದರು.</verse>
				<verse number="13">ಈ ಸಮಾಚಾರವನ್ನು ಕೇಳಿದ ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು, ದೋಣಿಹತ್ತಿ ನಿರ್ಜನಪ್ರದೇಶಕ್ಕೆ ಒಬ್ಬಂಟಿಗರಾಗಿ ಹೊರಟರು. ಇದನ್ನು ತಿಳಿದುಕೊಂಡ ಜನರು ಊರೂರುಗಳಿಂದ ಹೊರಟು ಗುಂಪುಗುಂಪಾಗಿ ಅವರ ಹಿಂದೆಯೇ ಕಾಲ್ದಾರಿಯಲ್ಲಿ ನಡೆದುಹೋದರು.</verse>
				<verse number="14">ಯೇಸು ದೋಣಿಯಿಂದ ಇಳಿದಾಗ, ದೊಡ್ಡ ಜನಸಮೂಹವನ್ನು ಕಂಡು ಅವರ ಮನ ಕರಗಿತು; ಅವರಲ್ಲಿ ಅಸ್ವಸ್ಥರಾಗಿದ್ದವರನ್ನು ಗುಣಪಡಿಸಿದರು.</verse>
				<verse number="15">ಸಂಜೆಯಾದಾಗ, ಶಿಷ್ಯರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನಪ್ರದೇಶ, ಈಗಾಗಲೇ ಹೊತ್ತು ಮೀರಿಹೋಗಿದೆ. ಜನಸಮೂಹವನ್ನು ಕಳುಹಿಸಿಬಿಡಿ, ಹಳ್ಳಿಪಳ್ಳಿಗಳಿಗೆ ಹೋಗಿ ಅವರಿಗೆ ಬೇಕಾದ ತಿಂಡಿತಿನಿಸುಗಳನ್ನು ಕೊಂಡುಕೊಳ್ಳಲಿ,” ಎಂದರು.</verse>
				<verse number="16">ಅದಕ್ಕೆ ಯೇಸು, “ಅವರು ಹೋಗಬೇಕಾಗಿಲ್ಲ, ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿ,” ಎಂದರು.</verse>
				<verse number="17">ಶಿಷ್ಯರು ಪ್ರತ್ಯುತ್ತರವಾಗಿ, “ನಮ್ಮ ಬಳಿ ಐದೇ ಐದು ರೊಟ್ಟಿ ಮತ್ತು ಎರಡು ಮೀನುಗಳು ಮಾತ್ರ ಇವೆ,” ಎಂದರು.</verse>
				<verse number="18">ಯೇಸು, “ಅವನ್ನು ಇಲ್ಲಿಗೆ ತನ್ನಿ,” ಎಂದು ಹೇಳಿ, ಜನರೆಲ್ಲರೂ ಹುಲ್ಲಿನ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಮಾಡಿದರು.</verse>
				<verse number="19">ಬಳಿಕ ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು, ಸ್ವರ್ಗದತ್ತ ಕಣ್ಣೆತ್ತಿನೋಡಿ, ದೇವರಿಗೆ ಸ್ತೋತ್ರಸಲ್ಲಿಸಿದರು. ತರುವಾಯ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟರು. ಶಿಷ್ಯರು ಜನರಿಗೆ ಹಂಚಿದರು.</verse>
				<verse number="20">ಎಲ್ಲರೂ ಹೊಟ್ಟೆತುಂಬ ತಿಂದು ತೃಪ್ತರಾದರು. ಉಳಿದಿದ್ದ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಹನ್ನೆರಡು ಬುಟ್ಟಿಗಳ ತುಂಬ ಆದುವು.</verse>
				<verse number="21">ಊಟ ಮಾಡಿದವರಲ್ಲಿ ಹೆಂಗಸರು, ಮಕ್ಕಳನ್ನು ಬಿಟ್ಟರೆ, ಗಂಡಸರೇ ಸುಮಾರು ಐದು ಸಾವಿರ ಇದ್ದರು.</verse>
				<verse number="22">ಇದಾದ ಮೇಲೆ ಯೇಸುಸ್ವಾಮಿ ತಾವು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ, ಶಿಷ್ಯರು ದೋಣಿ ಹತ್ತಿ ತಮಗಿಂತ ಮುಂದಾಗಿ ಹೋಗಬೇಕೆಂದು ಆಜ್ಞಾಪಿಸಿದರು.</verse>
				<verse number="23">ಜನರನ್ನು ಬೀಳ್ಕೊಟ್ಟ ಬಳಿಕ ಪ್ರಾರ್ಥನೆಮಾಡಲು ಯೇಸು ಒಬ್ಬರೇ ಬೆಟ್ಟಕ್ಕೆ ಹೋದರು. ಕತ್ತಲೆ ಕವಿದಾಗ ಅವರು ಅಲ್ಲಿ ಒಬ್ಬಂಟಿಗರಾಗಿದ್ದರು.</verse>
				<verse number="24">ಅಷ್ಟರಲ್ಲಿ ದೋಣಿ ದಡದಿಂದ ಬಹುದೂರ ಸಾಗಿತ್ತು. ಎದುರುಗಾಳಿ ಬೀಸಿ ಅದು ಅಲೆಗಳ ಬಡಿತಕ್ಕೆ ಸಿಕ್ಕಿಕೊಂಡಿತ್ತು.</verse>
				<verse number="25">ಆಗ ರಾತ್ರಿಯ ಕಡೇ ಜಾವದ ಸಮಯ. ಯೇಸು ಸರೋವರದ ಮೇಲೆ ನಡೆದುಕೊಂಡೇ ಶಿಷ್ಯರ ಬಳಿಗೆ ಬಂದರು.</verse>
				<verse number="26">ಹೀಗೆ ಸರೋವರದ ಮೇಲೆ ನಡೆದು ಬರುತ್ತಿದ್ದ ಯೇಸುವನ್ನು ನೋಡಿದಾಗ ಶಿಷ್ಯರು ಭಯಭ್ರಾಂತರಾದರು. ದಿಗಿಲುಗೊಂಡು, “ಭೂತ, ಭೂತ!” ಎಂದು ಚೀರಿದರು.</verse>
				<verse number="27">ತಕ್ಷಣವೇ ಯೇಸು, “ಭಯಪಡಬೇಡಿ, ನಾನೇ ಬೇರೆ ಯಾರೂ ಅಲ್ಲ, ಧೈರ್ಯದಿಂದಿರಿ,” ಎಂದು ಅವರೊಡನೆ ಮಾತನಾಡಿದರು.</verse>
				<verse number="28">ಆಗ ಪೇತ್ರನು, “ಸ್ವಾಮೀ, ನೀವೇ ಆದರೆ ನಾನೂ ನೀರಿನ ಮೇಲೆ ನಡೆದು ನಿಮ್ಮ ಬಳಿಗೆ ಬರುವಂತೆ ಆಜ್ಞಾಪಿಸಿ,” ಎಂದನು. ಯೇಸು, “ಬಾ” ಎಂದು ಕರೆಯಲು</verse>
				<verse number="29">ಪೇತ್ರನು ದೋಣಿಯನ್ನು ಬಿಟ್ಟು ನೀರಿನ ಮೇಲೆ ನಡೆಯುತ್ತಾ ಯೇಸುವಿನತ್ತ ಬಂದನು.</verse>
				<verse number="30">ಆದರೆ ಬಲವಾದ ಗಾಳಿ ಬೀಸುತ್ತಿರುವುದನ್ನು ಕಂಡು ಹೆದರಿದನು. ಹಾಗೆಯೇ ಮುಳುಗಿಹೋಗಲಾರಂಭಿಸಿದನು. ಆಗ, “ಸ್ವಾಮೀ, ಕಾಪಾಡಿ, ಕಾಪಾಡಿ,” ಎಂದು ಕೂಗಿಕೊಂಡನು.</verse>
				<verse number="31">ಆ ಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದುಕೊಂಡು, “ಅಲ್ಪವಿಶ್ವಾಸಿಯೇ, ಏಕೆ ಸಂದೇಹಪಟ್ಟೆ?” ಎಂದರು.</verse>
				<verse number="32">ಅನಂತರ ಅವರಿಬ್ಬರೂ ದೋಣಿಯನ್ನು ಹತ್ತಿದರು. ಕೂಡಲೇ ಗಾಳಿ ನಿಂತುಹೋಯಿತು.</verse>
				<verse number="33">ದೋಣಿಯಲ್ಲಿದ್ದವರು, “ನೀವು ನಿಜವಾಗಿಯೂ ದೇವರ ಪುತ್ರ!” ಎಂದು ಹೇಳಿ ಯೇಸುವನ್ನು ಆರಾಧಿಸಿದರು.</verse>
				<verse number="34">ಅವರೆಲ್ಲರೂ ಸರೋವರವನ್ನು ದಾಟಿ ಗೆನೆಸರೇತ್ ಊರಿನ ದಡ ಸೇರಿದರು.</verse>
				<verse number="35">ಈ ಊರಿನವರು ಯೇಸುಸ್ವಾಮಿಯನ್ನು ಗುರುತು ಹಚ್ಚಿದ್ದೇ ತಡ ಸುತ್ತಮುತ್ತಲಿನ ಊರುಗಳಿಗೆಲ್ಲಾ ಹೇಳಿಕಳುಹಿಸಿದರು. ರೋಗರುಜಿನಗಳಿಂದ ನರಳುತ್ತಿದ್ದವರನ್ನು ಕರೆದುಕೊಂಡು ಬಂದರು.</verse>
				<verse number="36">ಇವರು, “ನಿಮ್ಮ ಉಡುಪಿನ ಅಂಚನ್ನಾದರೂ ಮುಟ್ಟಲು ಅಪ್ಪಣೆಯಾದರೆ ಸಾಕು,” ಎಂದು ಯೇಸುವನ್ನು ಬೇಡಿಕೊಂಡರು. ಹಾಗೆ ಮುಟ್ಟಿದವರೆಲ್ಲಾ ಗುಣಹೊಂದಿದರು.</verse>
			</chapter>
			<chapter number="15">
				<verse number="1">ಬಳಿಕ ಜೆರುಸಲೇಮಿನಿಂದ ಫರಿಸಾಯರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯ ಬಳಿಗೆ ಬಂದು,</verse>
				<verse number="2">“ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಸಂಪ್ರದಾಯಗಳನ್ನು ಮೀರುವುದೇಕೆ? ಅವರು ಊಟಕ್ಕೆ ಮುಂಚೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟಮಾಡುವುದೇಕೆ?” ಎಂದು ಕೇಳಿದರು.</verse>
				<verse number="3">ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ನಿಮ್ಮ ಸಂಪ್ರದಾಯದ ಸಲುವಾಗಿ ನೀವು ದೇವರ ಆಜ್ಞೆಯನ್ನು ಮೀರುತ್ತೀರಲ್ಲ, ಅದೇಕೆ?”</verse>
				<verse number="4">‘ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು; ತಂದೆಗಾಗಲೀ, ತಾಯಿಗಾಗಲೀ, ಶಾಪಹಾಕುವವನಿಗೆ ಮರಣದಂಡನೆ ಆಗಲೇಬೇಕು’ ಎಂದು ದೇವರ ಕಟ್ಟಳೆ ಇದೆ.</verse>
				<verse number="5">ನೀವೋ, ಯಾರಾದರೂ ತನ್ನ ತಂದೆಗೆ ಅಥವಾ ತಾಯಿಗೆ, ‘ನನ್ನಿಂದ ನಿಮಗೆ ಸಲ್ಲತಕ್ಕದ್ದು ದೇವರಿಗೆ ಮುಡಿಪು’ ಎಂದು ಹೇಳಿಬಿಟ್ಟರೆ ಮುಗಿಯಿತು;</verse>
				<verse number="6">ಇನ್ನು ಅವನು ತನ್ನ ತಂದೆ ತಾಯಿಗಳನ್ನು ಗೌರವಿಸಬೇಕಾಗಿಲ್ಲ, ಎಂದು ಬೋಧಿಸುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ಸಲುವಾಗಿ ದೇವರ ವಾಕ್ಯವನ್ನೇ ನಿರರ್ಥಕಮಾಡಿಬಿಟ್ಟಿದ್ದೀರಿ.</verse>
				<verse number="7">ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ! -</verse>
				<verse number="8">‘ಬರಿಯ ಮಾತಿನ ಮನ್ನಣೆಯನ್ನೀಯುತ ಹೃದಯವನು ದೂರವಿರಿಸುತ ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ</verse>
				<verse number="9">ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ!’ ಎಂದರು.”</verse>
				<verse number="10">ಅನಂತರ ಯೇಸುಸ್ವಾಮಿ ಜನರನ್ನು ತಮ್ಮ ಬಳಿಗೆ ಕರೆದು, “ನಾನು ಹೇಳುವುದನ್ನು ಕೇಳಿ ಚೆನ್ನಾಗಿ ತಿಳಿದುಕೊಳ್ಳಿರಿ:</verse>
				<verse number="11">ಬಾಯೊಳಕ್ಕೆ ಹೋಗುವಂಥದ್ದು ಮನುಷ್ಯನನ್ನು ಕಲುಷಿತಗೊಳಿಸುವುದಿಲ್ಲ; ಬಾಯೊಳಗಿಂದ ಹೊರಕ್ಕೆ ಬರುವಂಥದ್ದೇ ಮನುಷ್ಯನನ್ನು ಕಲುಷಿತಗೊಳಿಸುತ್ತದೆ,” ಎಂದು ಹೇಳಿದರು.</verse>
				<verse number="12">ಆಗ ಶಿಷ್ಯರು ಹತ್ತಿರಕ್ಕೆ ಬಂದು, “ನಿಮ್ಮ ಮಾತನ್ನು ಕೇಳಿ ಫರಿಸಾಯರು ಬಹಳ ಬೇಸರಗೊಂಡಿದ್ದಾರೆಂದು ನಿಮಗೆ ತಿಳಿಯಿತೇ?’ ಎಂದರು.</verse>
				<verse number="13">ಅದಕ್ಕೆ ಯೇಸು, “ನನ್ನ ಪರಮಪಿತನು ನೆಡದ ಗಿಡಗಳನ್ನೆಲ್ಲಾ ಬೇರುಸಹಿತ ಕಿತ್ತುಹಾಕಲಾಗುವುದು.</verse>
				<verse number="14">ಅವರನ್ನು ಅವರಷ್ಟಕ್ಕೇ ಬಿಡಿ; ಅವರೊ ಕುರುಡರು, ಮತ್ತೊಬ್ಬರಿಗೆ ದಾರಿ ತೋರಿಸಲು ಹೋಗುತ್ತಾರೆ. ಕುರುಡನು ಕುರುಡನಿಗೆ ದಾರಿ ತೋರಿಸಿದರೆ ಇಬ್ಬರೂ ಹಳ್ಳದಲ್ಲಿ ಬೀಳುತ್ತಾರಷ್ಟೆ,” ಎಂದರು.</verse>
				<verse number="15">ಅದಕ್ಕೆ ಪೇತ್ರನು, “ನಮಗೆ ಈ ಸಾಮತಿಯ ಅರ್ಥವನ್ನು ತಿಳಿಸಿ,” ಎಂದು ಕೇಳಿಕೊಂಡನು.</verse>
				<verse number="16">ಯೇಸು ಇಂತೆಂದರು: “ನೀವು ಕೂಡ ಮಂದಮತಿಗಳೇನು? ಇದರ ಅರ್ಥ ನಿಮಗೂ ಆಗದೇನು?</verse>
				<verse number="17">ಬಾಯೊಳಕ್ಕೆ ಹೋಗುವುದೆಲ್ಲಾ ಹೊಟ್ಟೆಯನ್ನು ಸೇರಿ ಅಲ್ಲಿಂದ ವಿಸರ್ಜಿತವಾಗುತ್ತದೆ.</verse>
				<verse number="18">ಆದರೆ ಬಾಯಿಂದ ಹೊರಡುವಂಥವು ಅವನ ಹೃದಯದಿಂದ ಹೊರಹೊಮ್ಮುತ್ತವೆ; ಇವು ಮನುಷ್ಯನನ್ನು ಕಲುಷಿತಗೊಳಿಸುತ್ತವೆ.</verse>
				<verse number="19">ಹೃದಯದಿಂದ ದುರಾಲೋಚನೆ, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ಅಪದೂರು, ಇವು ಹೊರಬರುತ್ತವೆ.</verse>
				<verse number="20">ಮನುಷ್ಯನನ್ನು ಕಲುಷಿತಗೊಳಿಸುವಂಥವು ಇವೇ. ಕೈ ತೊಳೆಯದೆ ಊಟಮಾಡುವುದು ಮನುಷ್ಯನನ್ನು ಕಲುಷಿತಗೊಳಿಸುವುದಿಲ್ಲ,” ಎಂದರು.</verse>
				<verse number="21">ಯೇಸುಸ್ವಾಮಿ ಅಲ್ಲಿಂದ ಹೊರಟು ಟೈರ್ ಹಾಗೂ ಸಿದೋನ್ ಪ್ರಾಂತ್ಯಕ್ಕೆ ಹೋದರು.</verse>
				<verse number="22">ಅಲ್ಲಿ ವಾಸವಾಗಿದ್ದ ಕಾನಾನ್ ನಾಡಿನ ಮಹಿಳೆ ಒಬ್ಬಳು ಅವರ ಬಳಿಗೆ ಬಂದಳು. “ಸ್ವಾಮೀ, ದಾವೀದ ಕುಲಪುತ್ರರೇ, ನನಗೆ ದಯೆತೋರಿ, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಸಂಕಟಪಡುತ್ತಿದ್ದಾಳೆ,” ಎಂದು ಕೂಗಿಕೊಂಡಳು.</verse>
				<verse number="23">ಯೇಸು ಆಕೆಗೆ ಒಂದು ಮಾತನ್ನೂ ಹೇಳಲಿಲ್ಲ. ಶಿಷ್ಯರು ಹತ್ತಿರಕ್ಕೆ ಬಂದು, “ಇವಳನ್ನು ಕಳಿಸಿಬಿಡಿ, ಒಂದೇ ಸಮನೆ ಗೋಳಿಡುತ್ತಾ, ನಮ್ಮನ್ನು ಬೆಂಬತ್ತಿ ಬರುತ್ತಿದ್ದಾಳೆ,” ಎಂದು ಕೇಳಿಕೊಂಡರು.</verse>
				<verse number="24">ಆಗ ಯೇಸು, “ನನ್ನನ್ನು ಕಳಿಸಿರುವುದು ತಪ್ಪಿಹೋದ ಕುರಿಗಳಂತಿರುವ ಇಸ್ರಯೇಲ್ ಜನಾಂಗದವರ ಬಳಿಗೆ ಮಾತ್ರ,” ಎಂದರು.</verse>
				<verse number="25">ಆದರೂ ಆಕೆ ಯೇಸುವಿಗೆ ಅಡ್ಡಬಿದ್ದು, “ಸ್ವಾಮೀ, ಸಹಾಯ ಮಾಡಿ,” ಎಂದು ಯಾಚಿಸಿದಳು.</verse>
				<verse number="26">ಅದಕ್ಕೆ ಯೇಸು, “ಮಕ್ಕಳ ಆಹಾರವನ್ನು ತೆಗೆದು ನಾಯಿಗಳಿಗೆ ಎಸೆಯುವುದು ಸರಿಯಲ್ಲ,” ಎಂದರು.</verse>
				<verse number="27">ಆಗ ಆಕೆ, “ಅದು ನಿಜ ಸ್ವಾಮೀ, ನಾಯಿಗಳಾದರೂ ತಮ್ಮ ಯಜಮಾನನ ಮೇಜಿನಿಂದ ಕೆಳಕ್ಕೆ ಬೀಳುವ ಚೂರುಪಾರನ್ನು ತಿನ್ನುತ್ತವೆ, ಅಲ್ಲವೇ?’ ಎಂದು ಮರುತ್ತರ ಕೊಟ್ಟಳು.</verse>
				<verse number="28">ಆಗ ಯೇಸು, “ತಾಯಿ, ನಿನ್ನ ವಿಶ್ವಾಸ ಅಚಲವಾದುದು. ನಿನ್ನ ಕೋರಿಕೆ ನೆರವೇರಲಿ,” ಎಂದರು. ಅದೇ ಕ್ಷಣದಲ್ಲಿ ಆಕೆಯ ಮಗಳು ಗುಣಹೊಂದಿದಳು.</verse>
				<verse number="29">ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು, ಗಲಿಲೇಯ ಸರೋವರದ ತೀರದಲ್ಲೇ ನಡೆದು, ಒಂದು ಗುಡ್ಡವನ್ನು ಹತ್ತಿ ಅಲ್ಲಿ ಕುಳಿತುಕೊಂಡರು.</verse>
				<verse number="30">ಜನರು ಗುಂಪುಗುಂಪಾಗಿ ಅಲ್ಲಿಗೆ ಬಂದರು. ಕುಂಟರು, ಕುರುಡರು, ಮೂಕರು, ಅಂಗವಿಕಲರು ಮುಂತಾದ ಅನೇಕರನ್ನು ತಮ್ಮೊಡನೆ ಕರೆತಂದು ಯೇಸುವಿನ ಪಾದಸನ್ನಿಧಿಯಲ್ಲಿ ಬಿಟ್ಟರು. ಯೇಸು ಅವರನ್ನು ಗುಣಪಡಿಸಿದರು.</verse>
				<verse number="31">ಮೂಕರು ಮಾತನಾಡುವುದನ್ನೂ ಅಂಗವಿಕಲರು ಸ್ವಸ್ಥರಾಗುವುದನ್ನೂ ಕುಂಟರು ನಡೆಯುವುದನ್ನೂ ಕುರುಡರು ನೋಡುವುದನ್ನೂ ಈ ಜನರು ಕಂಡು ಆಶ್ಚರ್ಯಚಕಿತರಾಗಿ ಇಸ್ರಯೇಲಿನ ದೇವರನ್ನು ಕೊಂಡಾಡಿದರು.</verse>
				<verse number="32">ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು, “ಈ ಜನಸ್ತೋಮ ಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದೆ. ಊಟಕ್ಕೆ ಇವರಲ್ಲಿ ಏನೂ ಇಲ್ಲ. ಇವರನ್ನು ಕಂಡು ನನ್ನ ಹೃದಯ ಕರಗುತ್ತದೆ. ಇವರನ್ನು ಹಸಿದ ಹೊಟ್ಟೆಯಲ್ಲಿ ಕಳಿಸಿಬಿಡಲು ನನಗೆ ಇಷ್ಟವಿಲ್ಲ, ದಾರಿಯಲ್ಲಿ ಬಳಲಿ ಬಿದ್ದಾರು,” ಎಂದರು.</verse>
				<verse number="33">ಅದಕ್ಕೆ ಶಿಷ್ಯರು, “ಇಷ್ಟು ದೊಡ್ಡ ಗುಂಪಿಗೆ ಆಗುವಷ್ಟು ರೊಟ್ಟಿಯನ್ನು ಈ ಅಡವಿಯಲ್ಲಿ ನಾವು ತರುವುದಾದರೂ ಎಲ್ಲಿಂದ?” ಎಂದು ಕೇಳಿದರು.</verse>
				<verse number="34">“ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಯೇಸು ಕೇಳಿದರು. “ಏಳು ರೊಟ್ಟಿಗಳು ಮತ್ತು ಕೆಲವು ಸಣ್ಣ ಮೀನುಗಳಿವೆ,” ಎಂದು ಶಿಷ್ಯರು ಉತ್ತರಕೊಟ್ಟರು.</verse>
				<verse number="35">ಆಗ ಜನಸಮೂಹಕ್ಕೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಯೇಸು ಆಜ್ಞಾಪಿಸಿದರು.</verse>
				<verse number="36">ಅನಂತರ ಆ ಏಳು ರೊಟ್ಟಿಗಳನ್ನೂ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಸಲ್ಲಿಸಿ, ಅವುಗಳನ್ನು ಮುರಿದು ತಮ್ಮ ಶಿಷ್ಯರಿಗೆ ಕೊಟ್ಟರು; ಶಿಷ್ಯರು ಜನರಿಗೆ ಬಡಿಸಿದರು.</verse>
				<verse number="37">ಜನರೆಲ್ಲರೂ ಉಂಡು ತೃಪ್ತರಾದರು. ಉಳಿದ ತುಂಡುಗಳನ್ನು ಶಿಷ್ಯರು ಏಳು ಕುಕ್ಕೆಗಳ ತುಂಬ ತುಂಬಿಸಿಕೊಂಡರು.</verse>
				<verse number="38">ಊಟಮಾಡಿದವರಲ್ಲಿ ಹೆಂಗಸರು, ಮಕ್ಕಳಲ್ಲದೆ ಗಂಡಸರೇ ನಾಲ್ಕು ಸಾವಿರಮಂದಿ ಇದ್ದರು.</verse>
				<verse number="39">ತರುವಾಯ ಯೇಸು ಜನರ ಗುಂಪನ್ನು ಕಳುಹಿಸಿಬಿಟ್ಟು, ದೋಣಿಯನ್ನು ಹತ್ತಿ, ಮಗದಾನ್ ಎಂಬ ಪ್ರಾಂತ್ಯಕ್ಕೆ ಹೊರಟುಹೋದರು.</verse>
			</chapter>
			<chapter number="16">
				<verse number="1">ತರುವಾಯ ಫರಿಸಾಯರು ಮತ್ತು ಸದ್ದುಕಾಯರು ಯೇಸುಸ್ವಾಮಿಯ ಬಳಿಗೆ ಬಂದರು. ಸ್ವಾಮಿಯನ್ನು ಪರೀಕ್ಷಿಸುವ ದುರದ್ದೇಶದಿಂದ, “ನೀನು ದೇವರಿಂದ ಬಂದವನೆಂದು ಸೂಚಿಸಲು ಅದ್ಭುತವೊಂದನ್ನು ನಮಗೆ ಮಾಡಿತೋರಿಸು,” ಎಂದರು.</verse>
				<verse number="2">ಅದಕ್ಕೆ ಯೇಸು, “ಸಂಜೆಯಾದಾಗ ನೀವು ‘ಹವಾಮಾನವು ಹಿತಕರವಾಗಿರುತ್ತದೆ, ಏಕೆಂದರೆ ಆಕಾಶ ಕೆಂಪಗಿದೆ ಎನ್ನುತ್ತೀರಿ.’ ಬೆಳಗ್ಗೆ, ‘ಈ ದಿನ ಗಾಳಿಮಳೆ ಇರುತ್ತದೆ. ಏಕೆಂದರೆ ಕೆಂಪಾದ ಆಕಾಶದಲ್ಲಿ ಮೋಡ ಮುಚ್ಚಿದೆ’ ಎನ್ನುತ್ತೀರಿ.</verse>
				<verse number="3">ಆಕಾಶದಲ್ಲಿ ಕಾಣುವ ಲಕ್ಷಣಗಳನ್ನು ನೀವು ಅರ್ಥಮಾಡಿಕೊಳ್ಳಬಲ್ಲಿರಿ; ಆದರೆ ಈಗಿನ ಕಾಲದ ಲಕ್ಷಣಗಳನ್ನು ಅರ್ಥಮಾಡಿಕೊಳ್ಳಲು ನಿಮ್ಮಿಂದಾಗದು.</verse>
				<verse number="4">ಈ ದುಷ್ಟ ಹಾಗೂ ಅಧರ್ಮ ಪೀಳಿಗೆ ಅದ್ಭುತಗಳನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವಲ್ಲದೆ ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು,” ಎಂದು ಹೇಳಿ ಅವರನ್ನು ಬಿಟ್ಟು ಹೋದರು.</verse>
				<verse number="5">ಶಿಷ್ಯರು ಬುತ್ತಿಯನ್ನು ಕಟ್ಟಿಕೊಳ್ಳುವುದನ್ನು ಮರೆತು ಸರೋವರದ ಆಚೆ ದಡಕ್ಕೆ ಬಂದರು.</verse>
				<verse number="6">ಯೇಸುಸ್ವಾಮಿ ಅವರಿಗೆ, “ಎಚ್ಚರಿಕೆ, ಫರಿಸಾಯರ ಹಾಗೂ ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ!” ಎಂದರು.</verse>
				<verse number="7">ತಾವು ರೊಟ್ಟಿ ತಂದಿಲ್ಲವಾದ ಕಾರಣ ಯೇಸು ಹೀಗೆ ಹೇಳುತ್ತಿದ್ದಾರೆಂದು ಶಿಷ್ಯರು ತಮ್ಮತಮ್ಮಲ್ಲೇ ಮಾತನಾಡಿಕೊಳ್ಳಲಾರಂಭಿಸಿದರು.</verse>
				<verse number="8">ಇದನ್ನು ಗಮನಿಸಿದ ಯೇಸು, “ಅಲ್ಪವಿಶ್ವಾಸಿಗಳೇ, ರೊಟ್ಟಿಯನ್ನು ತಂದಿಲ್ಲವೆಂದು ನಿಮ್ಮನಿಮ್ಮಲ್ಲೇ ಚರ್ಚೆ ಏಕೆ?</verse>
				<verse number="9">ಏನು, ನಿಮಗಿನ್ನೂ ಅರಿವಿಲ್ಲವೆ? ಐದು ರೊಟ್ಟಿಗಳಿಂದ ನಾನು ಐದು ಸಾವಿರ ಜನರನ್ನು ತೃಪ್ತಿಪಡಿಸಿದ್ದು ನಿಮಗೆ ಜ್ಞಾಪಕವಿಲ್ಲವೆ? ಆಗ ಉಳಿದುದ್ದನ್ನು ಎಷ್ಟು ಬುಟ್ಟಿಗಳಲ್ಲಿ ತುಂಬಿಸಿಕೊಂಡಿರಿ?</verse>
				<verse number="10">ಅಲ್ಲದೆ ಏಳು ರೊಟ್ಟಿಗಳಿಂದ ನಾಲ್ಕು ಸಾವಿರ ಜನರನ್ನು ತೃಪ್ತಿಪಡಿಸಿದಾಗ, ಉಳಿದುದನ್ನು ಎಷ್ಟು ಕುಕ್ಕೆಗಳಲ್ಲಿ ತುಂಬಿಸಿಕೊಂಡಿರಿ?</verse>
				<verse number="11">ಹೀಗಿದ್ದೂ ನಾನು ಈಗ ರೊಟ್ಟಿಯನ್ನು ಕುರಿತು ಎಚ್ಚರಿಸಲಿಲ್ಲವೆಂದು ನೀವು ತಿಳಿಯದೆಹೋದಿರಲ್ಲಾ,” ಎಂದರು.</verse>
				<verse number="12">ರೊಟ್ಟಿಯ ಹಿಟ್ಟನ್ನು ಹುದುಗೆಬ್ಬಿಸುವ ಹುಳಿಯನ್ನು ಕುರಿತು ಅಲ್ಲ, ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯ ವಿಷಯವಾಗಿ ಜಾಗರೂಕರಾಗಿರಬೇಕೆಂದು ಯೇಸು ಎಚ್ಚರಿಸಿದರೆಂದು ಆಗ ಶಿಷ್ಯರು ಅರ್ಥಮಾಡಿಕೊಂಡರು.</verse>
				<verse number="13">ಯೇಸುಸ್ವಾಮಿ ‘ಫಿಲಿಪ್ಪನ ಸೆಜರೇಯ’ ಎಂಬ ಪ್ರಾಂತ್ಯಕ್ಕೆ ಬಂದರು. ಅಲ್ಲಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನರಪುತ್ರನನ್ನು ಜನರು ಯಾರೆಂದು ಹೇಳುತ್ತಾರೆ?” ಎಂದು ಕೇಳಿದರು.</verse>
				<verse number="14">ಅದಕ್ಕೆ ಶಿಷ್ಯರು, “ ‘ಸ್ನಾನಿಕ ಯೊವಾನ್ನ’, ಎಂದು ಕೆಲವರು ಹೇಳುತ್ತಾರೆ; ಮತ್ತೆ ಕೆಲವರು ' ಎಲೀಯನು' ಎನ್ನುತ್ತಾರೆ. ‘ಯೆರೆಮೀಯನು ಅಥವಾ ಪ್ರವಾದಿಗಳಲ್ಲಿ ತಾವೂ ಒಬ್ಬರು,’ ಎಂಬುದು ಇನ್ನೂ ಕೆಲವರ ಅಭಿಪ್ರಾಯ,” ಎಂದು ಉತ್ತರಕೊಟ್ಟರು.</verse>
				<verse number="15">ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪ್ರಶ್ನಿಸಿದರು.</verse>
				<verse number="16">ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ, ಜೀವಸ್ವರೂಪರಾದ ದೇವರ ಪುತ್ರ ತಾವೇ,” ಎಂದನು.</verse>
				<verse number="17">ಅದಕ್ಕೆ ಪ್ರತ್ಯುತ್ತರವಾಗಿ ಯೇಸು ಹೀಗೆಂದರು: “ಯೋನ್ನನ ಮಗ ಸಿಮೋನನೇ, ನೀನು ಧನ್ಯ! ಈ ವಿಷಯವನ್ನು ನಿನಗೆ ಶ್ರುತಪಡಿಸಿದ್ದು ನರಮಾನವ ಶಕ್ತಿ ಅಲ್ಲ. ಸ್ವರ್ಗದಲ್ಲಿರುವ ನನ್ನ ಪಿತನೇ.</verse>
				<verse number="18">ನಾನು ನಿನಗೆ ಹೇಳುತ್ತೇನೆ, ಕೇಳು: “ನಿನ್ನ ಹೆಸರು ಪೇತ್ರ! ಈ ಬಂಡೆಯ ಮೇಲೆ ನನ್ನ ಧರ್ಮಸಭೆಯನ್ನು ಕಟ್ಟುವೆನು, ಪಾತಾಳಲೋಕದ ಶಕ್ತಿಯು ಅದನ್ನು ಎಂದಿಗೂ ಜಯಿಸಲಾರದು.</verse>
				<verse number="19">ಸ್ವರ್ಗಸಾಮ್ರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು. ಇಹದಲ್ಲಿ ನೀನು ಏನನ್ನು ಬಂಧಿಸುತ್ತಿಯೋ ಅದನ್ನು ಪರದಲ್ಲಿಯೂ ಬಂಧಿಸಲಾಗುವುದು. ಇಹದಲ್ಲಿ ನೀನು ಏನನ್ನು ಬಿಚ್ಚುತ್ತೀಯೋ ಅದನ್ನು ಪರದಲ್ಲಿಯೂ ಬಿಚ್ಚಲಾಗುವುದು,”</verse>
				<verse number="20">ಅನಂತರ ಯೇಸು ತಮ್ಮ ಶಿಷ್ಯರಿಗೆ ತಾವು ‘ಅಭಿಷಿಕ್ತರಾದ ಲೋಕೋದ್ಧಾರಕ’ ಎಂಬುದನ್ನು ಯಾರಿಗೂ ಹೇಳಕೂಡದೆಂದು ಕಟ್ಟಪ್ಪಣೆ ಮಾಡಿದರು.</verse>
				<verse number="21">ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ನಾನು ಜೆರುಸಲೇಮಿಗೆ ಹೋಗಬೇಕಾಗಿದೆ; ಅಲ್ಲಿ ಸಭಾಪ್ರಮುಖರಿಂದಲೂ ಕಠಿಣವಾದ ಯಾತನೆಯನ್ನು ಅನುಭವಿಸಿ, ಮರಣಕ್ಕೆ ತುತ್ತಾಗಿ, ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿದೆ\ ಎಂದು ಅಂದಿನಿಂದಲೂ ಒತ್ತಿ ಹೇಳಲಾರಂಭಿಸಿದರು.</verse>
				<verse number="22">ಇದನ್ನು ಕೇಳಲಾಗದೆ ಪೇತ್ರನು ಯೇಸುವನ್ನು ಪಕ್ಕಕ್ಕೆ ಕರೆದು, “ಪ್ರಭೂ, ಹಾಗೆನ್ನಲೇಬೇಡಿ, ನಿಮಗೆಂದಿಗೂ ಹಾಗೆ ಸಂಭವಿಸದಿರಲಿ,” ಎಂದು ಪ್ರತಿಭಟಿಸಿದನು.</verse>
				<verse number="23">ಆದರೆ ಯೇಸು ಪೇತ್ರನತ್ತ ತಿರುಗಿ, “ಸೈತಾನನೇ, ತೊಲಗಿಲ್ಲಿಂದ; ನೀನು ನನಗೆ ಅಡೆತಡೆ; ನಿನ್ನ ಈ ಆಲೋಚನೆ ಮನುಷ್ಯರದ್ದೇ ಹೊರತು, ದೇವರದಲ್ಲ,” ಎಂದರು.</verse>
				<verse number="24">ಅನಂತರ ತಮ್ಮ ಶಿಷ್ಯರಿಗೆ ಹೀಗೆಂದರು: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.</verse>
				<verse number="25">ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಕಂಡುಕೊಳ್ಳುವನು.</verse>
				<verse number="26">ಪ್ರಪಂಚವನ್ನೆಲ್ಲಾ ಗೆದ್ದುಕೊಂಡರೂ ಒಬ್ಬನು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಅವನಿಗೆ ದೊರಕುವ ಲಾಭವೇನು? ಅಥವಾ ಮನುಷ್ಯರು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು?</verse>
				<verse number="27">ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.</verse>
				<verse number="28">ಇಲ್ಲಿರುವವರಲ್ಲಿ ಕೆಲವರು ನರಪುತ್ರನು ತನ್ನ ಸಾಮ್ರಾಜ್ಯದಲ್ಲಿ ಪ್ರತ್ಯಕ್ಷನಾಗುವುದನ್ನು ಕಾಣುವುದಕ್ಕೆ ಮುನ್ನ ಸಾವನ್ನು ಸವಿಯುವುದಿಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.</verse>
			</chapter>
			<chapter number="17">
				<verse number="1">ಆರು ದಿನಗಳ ಬಳಿಕ ಪೇತ್ರ, ಯೊವಾನ್ನ ಇವರನ್ನು ಯೇಸುಸ್ವಾಮಿ ಪ್ರತ್ಯೇಕವಾಗಿ ತಮ್ಮೊಡನೆ ಕರೆದುಕೊಂಡು ಎತ್ತರವಾದ ಒಂದು ಬೆಟ್ಟಕ್ಕೆ ಹೋದರು.</verse>
				<verse number="2">ಅಲ್ಲಿ ಆ ಶಿಷ್ಯರ ಕಣ್ಣೆದುರಿಗೇ ಸ್ವಾಮಿ ರೂಪಾಂತರ ಹೊಂದಿದರು, ಅವರ ಮುಖ ಸೂರ್ಯನಂತೆ ಪ್ರಕಾಶಿಸಿತು. ಅವರ ಉಡುಪು ಬೆಳಕಿನಂತೆ ಪ್ರಜ್ವಲಿಸಿತು.</verse>
				<verse number="3">ಇದ್ದಕ್ಕಿದ್ದ ಹಾಗೆ ಮೋಶೆ ಮತ್ತು ಎಲೀಯ ಪ್ರತ್ಯಕ್ಷರಾಗಿ ಯೇಸುವಿನೊಡನೆ ಮಾತನಾಡುತ್ತಿದ್ದುದು ಅವರಿಗೆ ಕಾಣಿಸಿತು.</verse>
				<verse number="4">ಆಗ ಪೇತ್ರನು ಯೇಸುವಿಗೆ, “ಪ್ರಭೂ, ನಾವು ಇಲ್ಲೇ ಇರುವುದು ಎಷ್ಟು ಒಳ್ಳೆಯದು! ಅಪ್ಪಣೆಯಾದರೆ ಇಲ್ಲಿ ಮೂರು ಗುಡಾರಗಳನ್ನು ಕಟ್ಟುವೆನು. ತಮಗೊಂದು, ಮೋಶೆಗೊಂದು, ಎಲೀಯನಿಗೊಂದು,” ಎಂದನು.</verse>
				<verse number="5">ಪೇತ್ರ ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೇಘವೊಂದು ಅವರನ್ನು ಆವರಿಸಿತು; ಆ ಮೇಘದಿಂದ ಒಂದು ವಾಣಿ, ‘ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ಈತನ ಮಾತಿಗೆ ಕಿವಿಗೊಡಿ,” ಎಂದಿತು.</verse>
				<verse number="6">ಶಿಷ್ಯರು ಈ ವಾಣಿಯನ್ನು ಕೇಳಿ ಭಯಭ್ರಾಂತರಾದರು; ಬೋರಲು ಬಿದ್ದರು.</verse>
				<verse number="7">ಆಗ ಯೇಸು ಅವರ ಹತ್ತಿರಕ್ಕೆ ಬಂದು ಅವರನ್ನು ಮುಟ್ಟಿ, “ಏಳಿ, ಭಯಪಡಬೇಡಿ,” ಎಂದರು.</verse>
				<verse number="8">ಅವರು ಕಣ್ಣೆತ್ತಿ ನೋಡಿದಾಗ ಯೇಸುವನ್ನು ಬಿಟ್ಟು ಮತ್ತೆ ಯಾರನ್ನೂ ಕಾಣಲಿಲ್ಲ.</verse>
				<verse number="9">ಅವರೆಲ್ಲರು ಬೆಟ್ಟದಿಂದ ಇಳಿದುಬರುವಾಗ ಯೇಸು, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡ ಈ ದರ್ಶನವನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು.</verse>
				<verse number="10">ಶಿಷ್ಯರು, “ಎಲೀಯನೇ ಮೊದಲು ಬರಬೇಕಾಗಿದೆ ಎಂದು ಶಾಸ್ತ್ರಜ್ಞರು ಹೇಳುತ್ತಾರಲ್ಲಾ, ಅದು ಹೇಗೆ?” ಎಂದು ಯೇಸುವನ್ನು ಕೇಳಿದರು.</verse>
				<verse number="11">ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಎಲೀಯನು ಬಂದು ಎಲ್ಲವನ್ನೂ ಸಜ್ಜುಗೊಳಿಸುವನು ಎಂಬುದು ನಿಜ.</verse>
				<verse number="12">ಆದರೆ ನಾನು ನಿಮಗೆ ಹೇಳುತ್ತೇನೆ; ಎಲೀಯನು ಈಗಾಗಲೇ ಬಂದಾಗಿದೆ; ಜನರು ಆತನನ್ನು ಗುರುತಿಸದೇ ತಮಗೆ ಇಷ್ಟಬಂದ ಹಾಗೆ ಹಿಂಸಿಸಿದ್ದೂ ಆಗಿದೆ. ಅಂತೆಯೇ ನರಪುತ್ರನೂ ಅವರ ಕೈಯಿಂದ ಯಾತನೆಯನ್ನು ಅನುಭವಿಸುವನು,” ಎಂದರು.</verse>
				<verse number="13">ಅವರು ಹೇಳುತ್ತಿರುವುದು ಸ್ನಾನಿಕ ಯೊವಾನ್ನನನ್ನು ಕುರಿತೇ ಎಂದು ಪ್ರೇಷಿತರು ಆಗ ಅರ್ಥಮಾಡಿಕೊಂಡರು.</verse>
				<verse number="14">ಜನರ ಗುಂಪು ಇದ್ದಲ್ಲಿಗೆ ಅವರೆಲ್ಲರು ಮರಳಿಬಂದರು. ಆಗ ಒಬ್ಬನು ಯೇಸುಸ್ವಾಮಿಯ ಬಳಿಗೆ ಬಂದು,</verse>
				<verse number="15">“ಪ್ರಭೂ, ನನ್ನ ಮಗನ ಮೇಲೆ ಕನಿಕರವಿಡಿ, ಅವನು ಮೂರ್ಛಾರೋಗಿ, ಅವನ ಕಷ್ಟ ಹೇಳತೀರದು, ಆಗಾಗ ಬೆಂಕಿಯಲ್ಲೋ ನೀರಿನಲ್ಲೋ ಬಿದ್ದುಬಿಡುತ್ತಾನೆ.</verse>
				<verse number="16">ಅವನನ್ನು ತಮ್ಮ ಶಿಷ್ಯರ ಬಳಿಗೆ ಕರೆದುಕೊಂಡು ಬಂದೆ. ಆದರೆ ಅವನನ್ನು ಗುಣಪಡಿಸಲು ಅವರಿಂದಾಗಲಿಲ್ಲ,” ಎಂದು ಮೊಣಕಾಲೂರಿ ಯಾಚಿಸಿದನು.</verse>
				<verse number="17">ಅದಕ್ಕೆ ಯೇಸು, “ಅಯ್ಯೋ ವಿಶ್ವಾಸವಿಲ್ಲದ ವಕ್ರ ಪೀಳಿಗೆಯೇ, ಇನ್ನೆಷ್ಟುಕಾಲ ನಾನು ನಿಮ್ಮೊಂದಿಗಿರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿ, “ಆ ಹುಡುಗನನ್ನು ಇಲ್ಲಿ ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.</verse>
				<verse number="18">ಅನಂತರ ಆ ಹುಡುಗನಲ್ಲಿದ್ದ ದೆವ್ವವನ್ನು ಅವರು ಗದರಿಸಿದೊಡನೆಯೇ, ಅದು ಅವನನ್ನು ಬಿಟ್ಟುಹೋಯಿತು. ಅವನು ತಕ್ಷಣವೇ ಸ್ವಸ್ಥನಾದನು.</verse>
				<verse number="19">ತರುವಾಯ ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಆ ದೆವ್ವವನ್ನು ಬಿಡಿಸಲು ನಮ್ಮಿಂದಾಗಲಿಲ್ಲವಲ್ಲ, ಅದೇಕೆ?” ಎಂದು ಕೇಳಿದರು.</verse>
				<verse number="20">ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಿಮ್ಮ ಅಲ್ಪವಿಶ್ವಾಸವೇ ಅದಕ್ಕೆ ಕಾರಣ. ನಾನು ನಿಶ್ಚಯವಾಗಿ ಹೇಳುತ್ತೇನೆ: ನಿಮಗೆ ಸಾಸಿವೆ ಕಾಳಿನಷ್ಟು ವಿಶ್ವಾಸವಾದರೂ ಇದ್ದಲ್ಲಿ, ಈ ಬೆಟ್ಟಕ್ಕೆ ಇಲ್ಲಿಂದ ಆ ಸ್ಥಳಕ್ಕೆ ಹೋಗು, ಎಂದು ಹೇಳಿದರೆ ಅದು ಹೋಗುತ್ತದೆ.</verse>
				<verse number="21">ನಿಮ್ಮಿಂದ ಅಸಾಧ್ಯವಾದುದು ಒಂದೂ ಇರದು. (ಈ ಬಗೆಯ ದೆವ್ವಗಳನ್ನು ಹೊರಗಟ್ಟಲು ಪ್ರಾರ್ಥನೆ ಮತ್ತು ಉಪವಾಸ ಮಾಡುವುದನ್ನು ಬಿಟ್ಟು ಬೇರೆ ಮಾರ್ಗವಿಲ್ಲ),” ಎಂದರು.</verse>
				<verse number="22">ಶಿಷ್ಯರೆಲ್ಲರು ಒಮ್ಮೆ ಗಲಿಲೇಯದಲ್ಲಿ ಒಟ್ಟಿಗೆ ಸೇರಿದ್ದರು. ಆಗ ಯೇಸು ಅವರಿಗೆ, “ನರಪುತ್ರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು;</verse>
				<verse number="23">ಅವರು ಆತನನ್ನು ಕೊಲ್ಲುವರು. ಆದರೆ ಮೂರನೆಯ ದಿನ ಆತನನ್ನು ಪುನರುತ್ಥಾನಗೊಳಿಸಲಾಗುವುದು,” ಎಂದರು. ಇದನ್ನು ಕೇಳಿ ಶಿಷ್ಯರು ತುಂಬ ವ್ಯಥೆಗೊಂಡರು.</verse>
				<verse number="24">ಯೇಸು ಮತ್ತು ಶಿಷ್ಯರು ಕಫೆರ್ನವುಮಿಗೆ ಹೋದರು. ದೇವಾಲಯದ ತೆರಿಗೆಯನ್ನು ವಸೂಲಿಮಾಡುತ್ತಿದ್ದವರು ಪೇತ್ರನ ಬಳಿಗೆ ಬಂದು, “ನಿಮ್ಮ ಗುರು ತೆರಿಗೆ ಕಟ್ಟುವುದಿಲ್ಲವೇ?” ಎಂದು ವಿಚಾರಿಸಿದರು. ಅದಕ್ಕೆ ಪೇತ್ರನು, “ಹೌದು, ಕಟ್ಟುತ್ತಾರೆ,” ಎಂದು ಉತ್ತರವಿತ್ತನು.</verse>
				<verse number="25">ಬಳಿಕ ಮನೆಗೆ ಬಂದಾಗ, ಅವನು ಮಾತೆತ್ತುವುದಕ್ಕೆ ಮೊದಲೇ ಯೇಸು, “ಸಿಮೋನಾ, ನಿನಗೆ ಏನನ್ನಿಸುತ್ತದೆ? ಇಹಲೋಕದ ರಾಜರು ಕಂದಾಯವನ್ನಾಗಲಿ, ತೆರಿಗೆಯನ್ನಾಗಲಿ ಯಾರಿಂದ ವಸೂಲಿಮಾಡುತ್ತಾರೆ? ತಮ್ಮ ಪುತ್ರರಿಂದಲೋ ಅಥವಾ ಪರರಿಂದಲೋ?\ ಎಂದು ಕೇಳಿದರು. “ಪರರಿಂದಲೇ,” ಎಂದು ಪೇತ್ರನು ಉತ್ತರಕೊಟ್ಟನು.</verse>
				<verse number="26">ಯೇಸು, “ಹಾಗಾದರೆ, ಪುತ್ರರು ತೆರಿಗೆ ಕಟ್ಟಬೇಕಾಗಿಲ್ಲ ತಾನೇ?</verse>
				<verse number="27">ಆದರೂ, ನಾವು ಇವರಿಗೆ ಅಡ್ಡಿಯಾಗಬಾರದು. ಎಂದೇ ನೀನು ಸರೋವರಕ್ಕೆ ಹೋಗಿ ಗಾಳಹಾಕು. ಮೊದಲು ಸಿಕ್ಕುವ ಮೀನನ್ನು ಎತ್ತಿಕೊಂಡು ಅದರ ಬಾಯಿ ತೆರೆದು ನೋಡು. ಅದರಲ್ಲಿ ಒಂದು ಬೆಳ್ಳಿ ನಾಣ್ಯ ದೊರಕುವುದು. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದರು.</verse>
			</chapter>
			<chapter number="18">
				<verse number="1">ಆ ಸಮಯದಲ್ಲಿ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತಲೂ ದೊಡ್ಡವನು ಯಾರು?” ಎಂದು ಕೇಳಿದರು.</verse>
				<verse number="2">ಯೇಸು ಒಂದು ಚಿಕ್ಕ ಮಗುವನ್ನು ತಮ್ಮ ಹತ್ತಿರಕ್ಕೆ ಕರೆದು, ಅದನ್ನು ಶಿಷ್ಯರ ನಡುವೆ ನಿಲ್ಲಿಸಿ ಹೀಗೆಂದರು:</verse>
				<verse number="3">“ನೀವು ಪರಿವರ್ತನೆ ಹೊಂದಿ ಮಕ್ಕಳಂತೆ ಆಗದಿದ್ದರೆ ಸ್ವರ್ಗಸಾಮ್ರಾಜ್ಯವನ್ನು ಸೇರಲಾರಿರಿ, ಎಂದು ನಿಶ್ಚಯವಾಗಿ ಹೇಳುತ್ತೇನೆ.</verse>
				<verse number="4">ಈ ಮಗುವಿನಂತೆ ನಮ್ರಭಾವವುಳ್ಳವನೇ ಸ್ವರ್ಗಸಾಮ್ರಾಜ್ಯದಲ್ಲಿ ಎಲ್ಲರಿಗಿಂತ ದೊಡ್ಡವನು.</verse>
				<verse number="5">ನನ್ನ ಹೆಸರಿನಲ್ಲಿ ಇಂತಹ ಮಗುವೊಂದನ್ನು ಸ್ವೀಕರಿಸುವವನು ನನ್ನನ್ನೇ ಸ್ವೀಕರಿಸುತ್ತಾನೆ.”</verse>
				<verse number="6">“ನನ್ನಲ್ಲಿ ವಿಶ್ವಾಸವಿಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಪಾಪಕ್ಕೆ ಕಾರಣನಾದರೆ ಅಂಥವನು ದೊಡ್ಡ ಬೀಸುವ ಕಲ್ಲನ್ನು ಕುತ್ತಿಗೆಗೆ ಬಿಗಿಸಿಕೊಂಡು, ಆಳವಾದ ಸಮುದ್ರದಲ್ಲಿ ದಬ್ಬಿಸಿಕೊಳ್ಳುವುದೇ ಲೇಸು.</verse>
				<verse number="7">ಪಾಪಕ್ಕೆ ಪ್ರಚೋದಿಸುವ ಲೋಕಕ್ಕೆ ಧಿಕ್ಕಾರ!</verse>
				<verse number="8">ನಿನ್ನ ಕೈಯೇ ಆಗಲಿ, ಕಾಲೇ ಆಗಲಿ, ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿ ಬಿಸಾಡಿಬಿಡು. ಎರಡು ಕೈಗಳಿದ್ದೋ ಎರಡು ಕಾಲುಗಳಿದ್ದೋ ನಿರಂತರ ಅಗ್ನಿಯಲ್ಲಿ ದಬ್ಬಿಸಿಕೊಳ್ಳುವುದಕ್ಕಿಂತ ಅಂಗಹೀನನಾಗಿ, ಕುಂಟನಾಗಿ ಅಮರಜೀವವನ್ನು ಪಡೆಯುವುದೇ ನಿನಗೆ ಲೇಸು.</verse>
				<verse number="9">ನಿನ್ನ ಕಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತು ಬಿಸಾಡಿಬಿಡು. ಎರಡು ಕಣ್ಣುಳ್ಳವನಾಗಿ ನರಕಾಗ್ನಿಗೆ ದಬ್ಬಿಸಿಕೊಳ್ಳುವುದಕ್ಕಿಂತ ಒಕ್ಕಣ್ಣನಾಗಿ ಅಮರಜೀವವನ್ನು ಪಡೆ. ಅದೇ ನಿನಗೆ ಲೇಸು.</verse>
				<verse number="10">“ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ.</verse>
				<verse number="11">ಸ್ವರ್ಗದಲ್ಲಿನ ಇವರ ದೂತರು ಸದಾಕಾಲ ನನ್ನ ಸ್ವರ್ಗೀಯ ಪಿತನ ಸಮ್ಮುಖದಲ್ಲಿ ಇದ್ದಾರೆ; ಇದು ನಿಮಗೆ ತಿಳಿದಿರಲಿ.</verse>
				<verse number="12">“ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳು ಇವೆಯೆನ್ನೋಣ. ಅವುಗಳಲ್ಲಿ ಒಂದು ಕುರಿ ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಗುಡ್ಡದಲ್ಲೇ ಬಿಟ್ಟು, ತಪ್ಪಿಸಿಕೊಂಡುಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ?</verse>
				<verse number="13">ಅದು ಸಿಕ್ಕಿತು ಅನ್ನಿ; ತಪ್ಪಿಸಿಕೊಳ್ಳದ ಆ ತೊಂಬತ್ತೊಂಬತ್ತು ಕುರಿಗಳಿಗಿಂತ ಸಿಕ್ಕಿದ ಆ ಒಂದು ಕುರಿಗಾಗಿ ಅವನು ಹೆಚ್ಚು ಆನಂದಪಡುತ್ತಾನೆ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.</verse>
				<verse number="14">ಅಂತೆಯೇ, ಈ ಚಿಕ್ಕವರಲ್ಲಿ ಒಬ್ಬನು ಕೂಡ ಕಳೆದುಹೋಗಬಾರದು; ಇದೇ ಸ್ವರ್ಗದಲ್ಲಿರುವ ನನ್ನ ತಂದೆಯ ಚಿತ್ತ.</verse>
				<verse number="15">“ನಿನ್ನ ಸೋದರನು ನಿನಗೆ ಅಪರಾಧಮಾಡಿದರೆ, ನೀನು ಹೋಗಿ ನೀವಿಬ್ಬರೇ ಇರುವಾಗ, ಅವನ ತಪ್ಪನ್ನು ಮನಗಾಣಿಸು. ಅವನು ನಿನಗೆ ಕಿವಿಗೊಟ್ಟರೆ ಅವನ ಸೋದರತ್ವವನ್ನು ನೀನು ಮತ್ತೆ ಗಳಿಸಿಕೊಂಡಂತಾಗುವುದು.</verse>
				<verse number="16">ಒಂದು ವೇಳೆ, ಅವನು ನಿನಗೆ ಕಿವಿಗೊಡದೆಹೋದರೆ ಒಬ್ಬಿಬ್ಬರನ್ನು ನಿನ್ನ ಸಂಗಡ ಕರೆದುಕೊಂಡು ಹೋಗು; ಹೀಗೆ ಇಬ್ಬರು ಅಥವಾ ಮೂವರು ಸಾಕ್ಷಿಗಳ ಸಮ್ಮುಖದಲ್ಲಿ ಪ್ರತಿಯೊಂದು ಮಾತೂ ಇತ್ಯರ್ಥವಾಗಲಿ.</verse>
				<verse number="17">ಅವರಿಗೂ ಅವನು ಕಿವಿಗೊಡದೆಹೋದಲ್ಲಿ ಧರ್ಮಸಭೆಗೆ ತಿಳಿಸು. ಧರ್ಮಸಭೆಗೂ ಅವನು ಕಿವಿಗೊಡದೆಹೋದರೆ ಅವನನ್ನು ಧರ್ಮಭ್ರಷ್ಟನೆಂದು ಹಾಗೂ ಬಹಿಷ್ಕೃತನೆಂದು ಪರಿಗಣಿಸು.</verse>
				<verse number="18">“ನೀವು ಇಹದಲ್ಲಿ ಏನನ್ನು ಬಂಧಿಸುತ್ತೀರೋ ಅದು ಪರದಲ್ಲೂ ಬಂಧಿಸಲಾಗುವುದು; ನೀವು ಇಹದಲ್ಲಿ ಏನನ್ನು ಬಿಚ್ಚುತ್ತೀರೋ ಅದು ಪರದಲ್ಲೂ ಬಿಚ್ಚಲಾಗುವುದು ಎಂದು ನಿಮಗೆ ಖಚಿತವಾಗಿ ಹೇಳುತ್ತೇನೆ.</verse>
				<verse number="19">“ಇನ್ನೂ ನಾನು ನಿಮಗೆ ಹೇಳುವುದು ಏನೆಂದರೆ: ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವುದಾದರೊಂದು ವಿಷಯವಾಗಿ ಇಹಲೋಕದಲ್ಲಿ ಒಮ್ಮನಸ್ಸುಳ್ಳವರಾಗಿದ್ದರೆ, ಅದು ಸ್ವರ್ಗದಲ್ಲಿರುವ ನನ್ನ ತಂದೆಯಿಂದ ಅವರಿಗೆ ಕೈಗೂಡುತ್ತದೆ.</verse>
				<verse number="20">ಎಲ್ಲಿ ಇಬ್ಬರು, ಮೂವರು ನನ್ನ ನಾಮದಲ್ಲಿ ಸೇರಿರುತ್ತಾರೋ, ಅಲ್ಲಿ ನಾನು ಅವರ ಮಧ್ಯೆ ಇರುತ್ತೇನೆ.”</verse>
				<verse number="21">ಅನಂತರ ಪೇತ್ರನು ಯೇಸುವಿನ ಬಳಿಗೆ ಬಂದು, “ಸ್ವಾಮೀ, ನನಗೆ ವಿರುದ್ಧ ದ್ರೋಹಮಾಡುತ್ತಾ ಇರುವ ನನ್ನ ಸಹೋದರನನ್ನು ಎಷ್ಟು ಸಲ ಕ್ಷಮಿಸಬೇಕು? ಏಳುಸಲವೇ?” ಎಂದು ಕೇಳಿದನು.</verse>
				<verse number="22">“ಏಳುಸಲವಲ್ಲ, ಏಳೆಪ್ಪತ್ತುಸಲ ಕ್ಷಮಿಸಬೇಕು ಎಂದು ನಾನು ನಿನಗೆ ಒತ್ತಿ ಹೇಳುತ್ತೇನೆ,” ಎಂದು ಯೇಸು ಉತ್ತರವಿತ್ತರು.</verse>
				<verse number="23">ಯೇಸು ತಮ್ಮ ಮಾತನ್ನು ಮುಂದುವರಿಸುತ್ತಾ, “ಸ್ವರ್ಗಸಾಮ್ರಾಜ್ಯಕ್ಕೆ ಈ ಹೋಲಿಕೆ ಅನ್ವಯಿಸುತ್ತದೆ: ಒಬ್ಬ ರಾಜನಿದ್ದ. ಅವನು ತನ್ನ ಸೇವಕರಿಂದ ಲೆಕ್ಕ ಕೇಳಲು ನಿರ್ಧರಿಸಿದ.</verse>
				<verse number="24">ಲೆಕ್ಕ ತೆಗೆದುಕೊಳ್ಳಲು ಆರಂಭಿಸಿದಾಗ ಹತ್ತು ಸಾವಿರ ‘ಚಿನ್ನದ ನಾಣ್ಯ’ ಗಳನ್ನು ಸಾಲವಾಗಿ ತೆರಬೇಕಾಗಿದ್ದ ಒಬ್ಬನನ್ನು ಅವನ ಸಮ್ಮುಖಕ್ಕೆ ಕರೆತರಲಾಯಿತು.</verse>
				<verse number="25">ಆದರೆ ಸಾಲ ತೀರಿಸಲು ಅವನ ಕೈಯಲ್ಲಿ ಹಣವಿರಲಿಲ್ಲ. ಆದುದರಿಂದ ಅವನಿಗಿದ್ದುದೆಲ್ಲವನ್ನು ಮಾತ್ರವಲ್ಲ, ಅವನನ್ನೂ ಅವನ ಮಡದಿ ಮಕ್ಕಳನ್ನೂ ಗುಲಾಮಗಿರಿಗೆ ಮಾರಿ, ಸಾಲ ತೀರಿಸುವಂತೆ ರಾಜ ಆಜ್ಞಾಪಿಸಿದ.</verse>
				<verse number="26">ಆಗ ಆ ಸೇವಕ ರಾಜನ ಕಾಲಿಗೆ ಬಿದ್ದು ಬೇಡಿಕೊಂಡ: ‘ಸ್ವಲ್ಪ ಸೈರಿಸಿಕೊಳ್ಳಿ ಸ್ವಾಮೀ, ನಿಮ್ಮ ಸಾಲವನ್ನೆಲ್ಲಾ ತೀರಿಸಿಬಿಡುತ್ತೇನೆ,’ ಎಂದು ಅಂಗಲಾಚಿದ.</verse>
				<verse number="27">ರಾಜನಿಗೆ ಕನಿಕರ ಉಂಟಾಯಿತು. ಆ ಸೇವಕನನ್ನು ಬಿಡುಗಡೆಮಾಡಿ ಅವನ ಸಾಲವನ್ನು ಮನ್ನಿಸಿಬಿಟ್ಟ.</verse>
				<verse number="28">“ಆದರೆ ಅದೇ ಸೇವಕ ಹೊರಗೆಬಂದದ್ದೇ ತನಗೆ ಕೇವಲ ನೂರು ‘ಬೆಳ್ಳಿಕಾಸು’ ಸಾಲ ತೆರಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಎದುರುಗೊಂಡ.</verse>
				<verse number="29">ಅವನನ್ನು ಹಿಡಿದು, ‘ನನಗೆ ಕೊಡಬೇಕಾದ ಸಾಲವನ್ನು ಈಗಲೇ ಕೊಟ್ಟು ತೀರಿಸು,’ ಎಂದು ಕುತ್ತಿಗೆ ಹಿಸುಕಿದ. ಆಗ ಆ ಜೊತೆಗಾರ, ‘ಸ್ವಲ್ಪ ಸೈರಿಸಿಕೊ, ಕೊಟ್ಟುಬಿಡುತ್ತೇನೆ,’ ಎಂದು ಕಾಲಿಗೆ ಬಿದ್ದು ಕೇಳಿಕೊಂಡ.</verse>
				<verse number="30">ಆದರೂ ಅವನು ಒಪ್ಪಲಿಲ್ಲ. ಅಷ್ಟುಮಾತ್ರವಲ್ಲ, ಸಾಲ ತೀರಿಸುವ ತನಕ ಆ ಜೊತೆಗಾರನನ್ನು ಸೆರೆಗೆ ಹಾಕಿಸಿದ.</verse>
				<verse number="31">ಇದೆಲ್ಲವನ್ನು ಕಂಡ ಇತರ ಸೇವಕರು ಬಹಳವಾಗಿ ನೊಂದುಕೊಂಡರು. ರಾಜನ ಬಳಿಗೆ ಹೋಗಿ ನಡೆದುದೆಲ್ಲವನ್ನೂ ವರದಿಮಾಡಿದರು.</verse>
				<verse number="32">ರಾಜನು ಅವನನ್ನು ಕರೆಯಿಸಿ, ‘ಎಲೋ ನೀಚ, ನೀನು ಬೇಡಿಕೊಂಡಿದ್ದರಿಂದ ಪೂರ್ತಿ ಸಾಲವನ್ನು ನಾನು ಮನ್ನಾಮಾಡಿದೆ.</verse>
				<verse number="33">ನಾನು ನಿನಗೆ ದಯೆತೋರಿಸಿದಂತೆ ನೀನೂ ನಿನ್ನ ಜೊತೆಗಾರನಿಗೆ ದಯೆತೋರಿಸಬೇಕಿತ್ತು ಅಲ್ಲವೇ?’ ಎಂದು ಸಿಟ್ಟುಗೊಂಡ.</verse>
				<verse number="34">ಬಳಿಕ ತನಗೆ ಬರಬೇಕಾಗಿದ್ದ ಸಾಲವನ್ನು ತೀರಿಸುವವರೆಗೂ ಅವನನ್ನು ಕಠಿಣ ಶಿಕ್ಷೆಗೆ ಗುರಿಪಡಿಸಿದ.</verse>
				<verse number="35">“ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸೋದರನನ್ನು ಮನಃಪೂರ್ವಕವಾಗಿ ಕ್ಷಮಿಸಬೇಕು. ಇಲ್ಲದಿದ್ದರೆ ಸ್ವರ್ಗದಲ್ಲಿರುವ ನನ್ನ ತಂದೆ ನಿಮಗೆ ಇದರಂತೆಯೇ ಮಾಡುವರು,” ಎಂದರು.</verse>
			</chapter>
			<chapter number="19">
				<verse number="1">ಈ ವಿಷಯಗಳನ್ನು ಹೇಳಿಯಾದ ಮೇಲೆ, ಯೇಸುಸ್ವಾಮಿ ಗಲಿಲೇಯವನ್ನು ಬಿಟ್ಟು ಜೋರ್ಡನ್ ನದಿಯ ಆಚೆಕಡೆ ಇದ್ದ ಜುದೇಯ ಪ್ರಾಂತ್ಯಕ್ಕೆ ಬಂದರು.</verse>
				<verse number="2">ದೊಡ್ಡ ಜನಸ್ತೋಮ ಅವರನ್ನು ಹಿಂಬಾಲಿಸಿತು. ಅಲ್ಲಿ ಯೇಸು ಅವರಿಗೆ ಆರೋಗ್ಯದಾನ ಮಾಡಿದರು.</verse>
				<verse number="3">ಫರಿಸಾಯರಲ್ಲಿ ಕೆಲವರು ಯೇಸುವಿನ ಬಳಿಗೆ ಬಂದು ಅವರನ್ನು ಮಾತಿನಲ್ಲಿ ಸಿಕ್ಕಿಸುವ ಉದ್ದೇಶದಿಂದ, “ಯಾವುದಾದರೂ ಕಾರಣದಿಂದ ಗಂಡನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೋ?” ಎಂದು ಕೇಳಿದರು.</verse>
				<verse number="4">ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೃಷ್ಟಿಕರ್ತ ಆದಿಯಿಂದಲೇ ಅವರನ್ನು ಗಂಡುಹೆಣ್ಣಾಗಿ ಉಂಟುಮಾಡಿದರು ಎಂದೂ,</verse>
				<verse number="5">‘ಈ ಕಾರಣದಿಂದಲೇ ಗಂಡನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಕೂಡಿಕೊಂಡು ಅವರಿಬ್ಬರೂ ಒಂದಾಗಿ ಬಾಳುವರು’ ಎಂದೂ ಹೇಳಿದ್ದಾರೆಂಬುದಾಗಿ ನೀವು ಪವಿತ್ರ‍ ಗ್ರಂಥದಲ್ಲಿ ಓದಿಲ್ಲವೇ?</verse>
				<verse number="6">ಹೀಗಿರುವಲ್ಲಿ, ಇನ್ನು ಮುಂದೆ ಅವರು ಇಬ್ಬರಲ್ಲ, ಒಂದೇ ಶರೀರವಾಗಿರುವರು. ಈ ನಿಮಿತ್ತ ದೇವರು ಒಂದುಗೂಡಿಸಿದ್ದನ್ನು ಮನುಷ್ಯನು ಬೇರ್ಪಡಿಸದೆ ಇರಲಿ,” ಎಂದರು.</verse>
				<verse number="7">\ಹಾಗಾದರೆ ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಹೆಂಡತಿಯನ್ನು ಬಿಟ್ಟುಬಿಡಬಹುದೆಂದು ಮೋಶೆಯು ನಿಯಮಿಸಿದ್ದು ಏಕೆ?” ಎಂದು ಫರಿಸಾಯರು ಮರುಪ್ರಶ್ನೆ ಹಾಕಿದರು.</verse>
				<verse number="8">“ನಿಮ್ಮ ಹೆಂಡತಿಯನ್ನು ನೀವು ಬಿಟ್ಟುಬಿಡಬಹುದೆಂದು ಮೋಶೆ ಅನುಮತಿ ಇತ್ತದ್ದು ನಿಮ್ಮ ಹೃದಯ ಕಾಠಿಣ್ಯದ ನಿಮಿತ್ತದಿಂದಲೇ. ಆದರೆ ಅದು ಆದಿಯಿಂದಲೇ ಹಾಗಿರಲಿಲ್ಲ.</verse>
				<verse number="9">ನಾನು ನಿಮಗೆ ಹೇಳುವುದನ್ನು ಕೇಳಿ; ತನ್ನ ಹೆಂಡತಿಯನ್ನು ಅವಳ ದುರ್ನಡತೆಯ ಕಾರಣದಿಂದಲ್ಲದೆ ಬಿಟ್ಟುಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನೂ ವ್ಯಭಿಚಾರಿಯಾಗುತ್ತಾನೆ.”</verse>
				<verse number="10">ಶಿಷ್ಯರು ಆಗ, “ಸತಿಪತಿಯರ ಸಂಬಂಧ ಈ ರೀತಿ ಇರುವುದಾದರೆ, ಮದುವೆಮಾಡಿಕೊಳ್ಳದಿರುವುದೇ ಲೇಸು,” ಎಂದರು.</verse>
				<verse number="11">ಅದಕ್ಕೆ ಯೇಸು, “ಇದನ್ನು ಅಂಗೀಕರಿಸಲು ಎಲ್ಲರಿಂದಲೂ ಸಾಧ್ಯವಿಲ್ಲ; ಯಾರಿಗೆ ಅನುಗ್ರಹಿಸಲಾಗಿದೆಯೋ ಅವರಿಂದ ಮಾತ್ರ ಸಾಧ್ಯ.</verse>
				<verse number="12">ತಾಯಿಯ ಉದರದಿಂದಲೇ ನಪುಂಸಕರಾಗಿ ಹುಟ್ಟಿದವರಿದ್ದಾರೆ; ಜನರಿಂದ ನಪುಂಸಕರಾದವರು ಕೂಡ ಇದ್ದಾರೆ; ಸ್ವರ್ಗಸಾಮ್ರಾಜ್ಯದ ನಿಮಿತ್ತ ಅವಿವಾಹಿತರಾಗಿ ಇರುವವರೂ ಇದ್ದಾರೆ; ಇದನ್ನು ಅಂಗೀಕರಿಸಬಲ್ಲವನು ಅಂಗೀಕರಿಸಲಿ,” ಎಂದರು.</verse>
				<verse number="13">ಅನಂತರ ಕೆಲವರು ಚಿಕ್ಕಮಕ್ಕಳನ್ನು ಯೇಸುಸ್ವಾಮಿಯ ಬಳಿಗೆ ತಂದರು. ಅವುಗಳ ಮೇಲೆ ಕೈಯಿಟ್ಟು ಪ್ರಾರ್ಥನೆ ಮಾಡಬೇಕೆಂದು ಕೇಳಿಕೊಂಡರು. ಶಿಷ್ಯರು ಅವರನ್ನು ಗದರಿಸಿದರು.</verse>
				<verse number="14">ಆಗ ಯೇಸು, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ; ಅವುಗಳನ್ನು ತಡೆಯಬೇಡಿ, ಸ್ವರ್ಗಸಾಮ್ರಾಜ್ಯ ಇಂಥವರದೇ,” ಎಂದರು.</verse>
				<verse number="15">ತರುವಾಯ ಆ ಮಕ್ಕಳ ಮೇಲೆ ಕೈಯಿಟ್ಟು ಆಶೀರ್ವದಿಸಿದರು. ಬಳಿಕ ಅಲ್ಲಿಂದ ಹೊರಟುಹೋದರು.</verse>
				<verse number="16">ಒಮ್ಮೆ ಯೇಸುಸ್ವಾಮಿಯ ಬಳಿಗೆ ಒಬ್ಬ ಯುವಕನು ಬಂದು, “ಗುರುದೇವಾ, ಅಮರ ಜೀವವನ್ನು ಪಡೆಯಲು ನಾನು ಒಳ್ಳೆಯದೇನನ್ನು ಮಾಡಬೇಕು?” ಎಂದು ಕೇಳಿದನು.</verse>
				<verse number="17">ಅದಕ್ಕೆ ಅವರು, “ಒಳ್ಳೆಯದನ್ನು ಕುರಿತು ನೀನು ನನ್ನನ್ನು ವಿಚಾರಿಸುವುದು ಏಕೆ? ಒಳ್ಳೆಯವರು ಒಬ್ಚರೇ. ನೀನು ಆ ಜೀವಕ್ಕೆ ಪ್ರವೇಶಿಸಬೇಕಾದರೆ ದೈವಾಜ್ಞೆಗಳನ್ನು ಅನುಸರಿಸು,” ಎಂದರು.</verse>
				<verse number="18">“ಅವು ಯಾವುವು?” ಎಂದು ಮರುಪ್ರಶ್ನೆ ಹಾಕಿದ. ಅವನಿಗೆ ಯೇಸು, “ನರಹತ್ಯೆ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು ಮತ್ತು</verse>
				<verse number="19">ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸಬೇಕು,” ಎಂದರು.</verse>
				<verse number="20">ಅದಕ್ಕೆ ಆ ಯುವಕ, “ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ. ನನ್ನಲ್ಲಿ ಇನ್ನೇನು ಕೊರತೆ ಇದೆ?” ಎಂದು ಮತ್ತೆ ಕೇಳಿದ.</verse>
				<verse number="21">ಆಗ ಯೇಸು, “ನೀನು ಸಂಪೂರ್ಣನಾಗಬೇಕು ಎಂದಿದ್ದರೆ ಹೋಗು, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.</verse>
				<verse number="22">ಇದನ್ನು ಕೇಳಿದ್ದೇ ಆ ಯುವಕ ಖಿನ್ನಮನಸ್ಕನಾಗಿ ಅಲ್ಲಿಂದ ಹೊರಟೇಹೋದ. ಏಕೆಂದರೆ ಅವನಿಗೆ ಅಪಾರ ಆಸ್ತಿಪಾಸ್ತಿಯಿತ್ತು.</verse>
				<verse number="23">ಆಗ ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಐಶ್ವರ್ಯವಂತನು ಸ್ವರ್ಗಸಾಮ್ರಾಜ್ಯವನ್ನು ಪ್ರವೇಶಿಸುವುದು ಕಷ್ಟವೆಂದು ನಿಮಗೆ ಒತ್ತಿ ಹೇಳುತ್ತೇನೆ.</verse>
				<verse number="24">ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದಕ್ಕಿಂತಲೂ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಸುಳುವುದು ಸುಲಭ ಎಂಬುದು ನಿಜ,” ಎಂದರು.</verse>
				<verse number="25">ಇದನ್ನು ಕೇಳಿದ ಮೇಲಂತೂ ಶಿಷ್ಯರು ಬೆಬ್ಬೆರಗಾದರು. “ಹಾಗಾದರೆ, ಯಾರು ತಾನೆ ಜೀವೋದ್ಧಾರ ಹೊಂದಲು ಸಾಧ್ಯ?” ಎಂದುಕೊಂಡರು.</verse>
				<verse number="26">ಯೇಸು ಅವರನ್ನು ನಿಟ್ಟಿಸಿ ನೋಡುತ್ತಾ, “ಮನುಷ್ಯರಿಗಿದು ಅಸಾಧ್ಯ; ಆದರೆ ದೇವರಿಗೆ ಎಲ್ಲವೂ ಸಾಧ್ಯ,” ಎಂದರು.</verse>
				<verse number="27">ಪೇತ್ರನು ಆಗ ಮುಂದೆ ಬಂದು, “ನೋಡಿ, ನಾವು ಎಲ್ಲವನ್ನು ಬಿಟ್ಟುಬಿಟ್ಟು ತಮ್ಮನ್ನು ಹಿಂಬಾಲಿಸಿದ್ದೇವೆ. ನಮಗೇನು ದೊರಕುತ್ತದೆ?” ಎಂದು ಕೇಳಿದನು.</verse>
				<verse number="28">ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ.</verse>
				<verse number="29">ನನ್ನ ನಾಮದ ನಿಮಿತ್ತ ಮನೆಮಠವನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಂದೆತಾಯಿಯರನ್ನಾಗಲಿ, ಮಕ್ಕಳುಮರಿಗಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುವ ಪ್ರತಿಯೊಬ್ಬನೂ ನೂರ್ಮಡಿಯಷ್ಟು ಪಡೆಯುವನು; ಮಾತ್ರವಲ್ಲ, ಅಮರಜೀವಕ್ಕೆ ಬಾಧ್ಯಸ್ಥನಾಗುವನು.</verse>
				<verse number="30">ಆದರೆ ಮೊದಲಿನವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು.</verse>
			</chapter>
			<chapter number="20">
				<verse number="1">“ಸ್ವರ್ಗಸಾಮ್ರಾಜ್ಯವು ಹೀಗಿದೆ: ಒಬ್ಬ ಯಜಮಾನನಿಗೆ ಒಂದು ದ್ರಾಕ್ಷಿತೋಟವಿತ್ತು. ಅದರಲ್ಲಿ ಕೆಲಸ ಮಾಡುವುದಕ್ಕೆ ಕೂಲಿಗಾರರನ್ನು ಗೊತ್ತುಮಾಡಲು ಅವನು ಬೆಳಗಿನ ಜಾವದಲ್ಲೇ ಹೊರಟ.</verse>
				<verse number="2">ಆಳಿಗೆ ಒಂದು ಬೆಳ್ಳಿ ನಾಣ್ಯದಂತೆ ದಿನಕೂಲಿಯನ್ನು ಮಾತಾಡಿ ತೋಟಕ್ಕೆ ಕಳುಹಿಸಿದ.</verse>
				<verse number="3">ಸುಮಾರು ಬೆಳಿಗ್ಗೆ ಒಂಭತ್ತು ಗಂಟೆಗೆ ಅವನು ಪುನಃ ಸಂತೆಬೀದಿಯ ಕಡೆ ಹೋದ. ಕೆಲಸವಿಲ್ಲದೆ ಸುಮ್ಮನೆ ನಿಂತುಕೊಂಡಿದ್ದ ಕೆಲವು ಕೂಲಿಗಾರರನ್ನು ಅಲ್ಲಿ ಕಂಡ.</verse>
				<verse number="4">ನೀವೂ ನನ್ನ ದ್ರಾಕ್ಷಿತೋಟಕ್ಕೆ ಹೋಗಿರಿ; ನ್ಯಾಯವಾದ ಕೂಲಿಯನ್ನು ನಿಮಗೆ ಕೊಡುತ್ತೇನೆ,’ ಎಂದ. ಅವರೂ ಹೋದರು.</verse>
				<verse number="5">ಬಳಿಕ ಸುಮಾರು ಹನ್ನೆರಡು ಗಂಟೆಗೊಮ್ಮೆ, ಮತ್ತೆ ಮೂರು ಗಂಟೆಗೊಮ್ಮೆ ಹೋಗಿ ಇನ್ನೂ ಕೆಲವರನ್ನು ಕೆಲಸಕ್ಕೆ ಕಳುಹಿಸಿದ.</verse>
				<verse number="6">ಐದು ಗಂಟೆಗೆ ಹೋದಾಗಲೂ ಬೇರೆ ಕೆಲವರು ಅಲ್ಲಿ ನಿಂತಿರುವುದನ್ನು ಕಂಡು, ‘ದಿನವಿಡೀ ಕೆಲಸಮಾಡದೆ ಸುಮ್ಮನೆ ಇಲ್ಲಿ ನಿಂತಿದ್ದೀರಲ್ಲಾ, ಏಕೆ?’ ಎಂದು ಕೇಳಿದ.</verse>
				<verse number="7">ಅದಕ್ಕೆ ಅವರು, ‘ನಮ್ಮನ್ನು ಯಾರೂ ಕೂಲಿಗೆ ಕರೆಯಲಿಲ್ಲ,’ ಎಂದರು. ‘ಹಾಗಾದರೆ ನೀವೂ ಕೂಡ ನನ್ನ ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡಿ,’ ಎಂದು ಹೇಳಿ ಅವರನ್ನೂ ಕಳುಹಿಸಿದ.</verse>
				<verse number="8">“ಸಂಜೆಯಾಯಿತು, ತೋಟದ ಯಜಮಾನ ತನ್ನ ಮೇಸ್ತ್ರಿಗೆ, ‘ಕೂಲಿಯಾಳುಗಳನ್ನು ಕರೆದು, ಕೊನೆಗೆ ಬಂದವರಿಂದ ಆರಂಭಿಸಿ ಮೊದಲು ಬಂದವರ ತನಕ ಕೂಲಿಕೊಡು,’ ಎಂದ.</verse>
				<verse number="9">ಅದರಂತೆ ಐದು ಗಂಟೆಗೆ ಗೊತ್ತುಮಾಡಿದವರು ಬಂದಾಗ ಒಬ್ಬೊಬ್ಬನಿಗೆ ಒಂದೊಂದು ಬೆಳ್ಳಿನಾಣ್ಯ ಸಿಕ್ಕಿತು.</verse>
				<verse number="10">ಮೊತ್ತಮೊದಲು ಗೊತ್ತುಮಾಡಿದವರು ತಮ್ಮ ಸರದಿ ಬಂದಾಗ, ತಮಗೆ ಹೆಚ್ಚು ಸಿಗುವುದೆಂದು ಭಾವಿಸಿದರು. ಆದರೆ ಅವರಿಗೂ ಒಂದೊಂದೇ ಬೆಳ್ಳಿನಾಣ್ಯ ದೊರಕಿತು.</verse>
				<verse number="11">ಅದನ್ನು ತೆಗೆದುಕೊಂಡಾಗ ಅವರು ದಣಿಯ ವಿರುದ್ಧ ಗೊಣಗಲಾರಂಭಿಸಿದರು.</verse>
				<verse number="12">‘ಕಡೇಹೊತ್ತಿನಲ್ಲಿ ಬಂದ ಇವರು ಒಂದೇ ಒಂದು ಗಂಟೆ ಕೆಲಸಮಾಡಿದ್ದಾರೆ, ಬಿಸಿಲಲ್ಲಿ ಬೆಂದು, ದಿನವೆಲ್ಲಾ ದುಡಿದ ನಮ್ಮನ್ನು ಇವರಿಗೆ ಸರಿಸಮಮಾಡಿದ್ದೀರಲ್ಲಾ!’ ಎಂದರು.</verse>
				<verse number="13">ಅದಕ್ಕೆ ಯಜಮಾನ ಅವರಲ್ಲಿ ಒಬ್ಬನಿಗೆ, ‘ಅಯ್ಯಾ, ನಿನಗೆ ನಾನು ಅನ್ಯಾಯಮಾಡಿಲ್ಲ. ದಿನಕ್ಕೊಂದು ಬೆಳ್ಳಿನಾಣ್ಯದಂತೆ ನೀನು ನನ್ನೊಡನೆ ಒಪ್ಪಂದಮಾಡಿಕೊಳ್ಳಲಿಲ್ಲವೆ?</verse>
				<verse number="14">ನಿನ್ನ ಕೂಲಿ ಏನೋ ಅದನ್ನು ತೆಗೆದುಕೊಂಡು ಹೋಗು. ನಿನಗೆ ಕೊಟ್ಟಷ್ಟನ್ನು ಈ ಕಟ್ಟಕಡೆಯವನಿಗೂ ಕೊಡುವುದು ನನ್ನ ಇಷ್ಟ.</verse>
				<verse number="15">ನನ್ನದನ್ನು ನನ್ನಿಷ್ಟಾನುಸಾರ ಕೊಡುವ ಹಕ್ಕು ನನಗಿಲ್ಲವೆ? ನನ್ನ ಔದಾರ್ಯವನ್ನು ಕಂಡು ನಿನಗೇಕೆ ಹೊಟ್ಟೆಯುರಿ?’ ಎಂದ.</verse>
				<verse number="16">ಹೀಗೆ, ಕಡೆಯವರು ಮೊದಲಿನವರಾಗುವರು; ಮೊದಲಿನವರು ಕಡೆಯವರಾಗುವರು,” ಎಂದು ಯೇಸು ಬೋಧಿಸಿದರು.</verse>
				<verse number="17">ಯೇಸುಸ್ವಾಮಿ ಜೆರುಸಲೇಮಿನತ್ತ ಹೋಗುವಾಗ ದಾರಿಯಲ್ಲಿ, ತಮ್ಮ ಹನ್ನೆರಡುಮಂದಿ ಶಿಷ್ಯರನ್ನು ಪ್ರತ್ಯೇಕವಾಗಿ ಕರೆದು,</verse>
				<verse number="18">“ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ನರಪುತ್ರನನ್ನು ಮುಖ್ಯಯಾಜಕರ ಮತ್ತು ಧರ್ಮಶಾಸ್ತ್ರಿಗಳ ವಶಕ್ಕೆ ಒಪ್ಪಿಸುವರು.</verse>
				<verse number="19">ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ ಪರಕೀಯರ ಕೈಗೊಪ್ಪಿಸುವರು. ಇವರು ಆತನನ್ನು ಪರಿಹಾಸ್ಯಮಾಡುವರು, ಕೊರಡೆಗಳಿಂದ ಹೊಡೆಯುವರು, ಮತ್ತು ಶಿಲುಬೆಗೇರಿಸುವರು. ಆತನಾದರೋ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದರು.</verse>
				<verse number="20">ಆಗ ಜೆಬೆದಾಯನ ಮಕ್ಕಳ ತಾಯಿ ಪುತ್ರರ ಸಮೇತ ಯೇಸುಸ್ವಾಮಿಯ ಬಳಿಗೆ ಬಂದಳು. “ತಮ್ಮಿಂದ ನನಗೊಂದು ಉಪಕಾರ ಆಗಬೇಕು,” ಎಂದು ಸ್ವಾಮಿಯ ಪಾದಕ್ಕೆರಗಿದಳು.</verse>
				<verse number="21">“ನಿನ್ನ ಕೋರಿಕೆ ಏನು?” ಎಂದರು ಯೇಸು. ಅದಕ್ಕೆ ಅವಳು, “ತಮ್ಮ ಸಾಮ್ರಾಜ್ಯದಲ್ಲಿ, ನನ್ನ ಈ ಇಬ್ಬರು ಮಕ್ಕಳಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ತಮ್ಮ ಎಡಗಡೆಯಲ್ಲೂ ಆಸೀನರಾಗುವಂತೆ ಅಪ್ಪಣೆಯಾಗಬೇಕು,” ಎಂದು ಕೋರಿದಳು.</verse>
				<verse number="22">ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಬೇಕಾದ ಪಾತ್ರೆಯಿಂದ ಕುಡಿಯಲು ನಿಮ್ಮಿಂದ ಆದೀತೆ?” ಎಂದು ಪ್ರಶ್ನಿಸಿದರು. “ಹೌದು, ಆಗುತ್ತದೆ,” ಎಂದು ಅವರು ಮರುನುಡಿದರು.</verse>
				<verse number="23">ಆಗ ಯೇಸು, “ನನ್ನ ಪಾತ್ರೆಯಿಂದ ನೀವೇನೋ ಕುಡಿಯುವಿರಿ. ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ನನ್ನ ಪಿತನಿಂದ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು,\ ಎಂದು ನುಡಿದರು.</verse>
				<verse number="24">ಉಳಿದ ಹತ್ತುಮಂದಿ ಶಿಷ್ಯರು ಇದನ್ನು ಕೇಳಿದಾಗ ಆ ಇಬ್ಬರು ಸಹೋದರರ ಮೇಲೆ ಸಿಟ್ಟುಗೊಂಡರು.</verse>
				<verse number="25">ಯೇಸುವಾದರೋ, ಶಿಷ್ಯರೆಲ್ಲರನ್ನೂ ತಮ್ಮ ಬಳಿಗೆ ಕರೆದು, “ಲೋಕದ ಪ್ರಜಾಧಿಪತಿಗಳು ತಮ್ಮ ಪ್ರಜೆಗಳ ಮೇಲೆ ದರ್ಪದಿಂದ ದೊರೆತನಮಾಡುತ್ತಾರೆ; ಜನನಾಯಕರು ಎನ್ನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನಮಾಡುತ್ತಾರೆ.</verse>
				<verse number="26">ಇದು ನಿಮಗೆ ಗೊತ್ತು. ನೀವು ಹಾಗಿರಬಾರದು.</verse>
				<verse number="27">ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮಗೆ ಸೇವಕನಾಗಿರಲಿ. ಪ್ರಥಮನಾಗಿರಲು ಆಶಿಸುವವನು ನಿಮ್ಮ ದಾಸನಾಗಿರಲಿ.</verse>
				<verse number="28">ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.</verse>
				<verse number="29">ಅವರೆಲ್ಲರೂ ಜೆರಿಕೊ ಪಟ್ಟಣವನ್ನು ಬಿಟ್ಟು ಹೊರಟರು. ಜನರ ದೊಡ್ಡ ಗುಂಪು ಯೇಸುಸ್ವಾಮಿಯನ್ನು ಹಿಂಬಾಲಿಸಿತು.</verse>
				<verse number="30">ದಾರಿಯ ಪಕ್ಕದಲ್ಲಿ ಇಬ್ಬರು ಕುರುಡರು ಕುಳಿತಿದ್ದರು. ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾರೆಂದು ಕೇಳಿದೊಡನೆಯೇ, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ಆ ಕುರುಡರು ಕೂಗಿಕೊಂಡರು.</verse>
				<verse number="31">ಸುಮ್ಮನಿರಬೇಕೆಂದು ಜನರು ಅವರನ್ನು ಗದರಿಸಿದರು. ಅವರಾದರೋ, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ಇನ್ನೂ ಗಟ್ಟಿಯಾಗಿ ಕೂಗಿಕೊಂಡರು.</verse>
				<verse number="32">ಯೇಸು ಅಲ್ಲೇ ನಿಂತು, ಅವರನ್ನು ಕರೆದರು. “ನನ್ನಿಂದ ನಿಮಗೇನಾಗಬೇಕು?” ಎಂದು ಕೇಳಿದರು.</verse>
				<verse number="33">ಅದಕ್ಕೆ ಅವರು, “ಸ್ವಾಮೀ, ನಮಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದರು.</verse>
				<verse number="34">ಯೇಸುವಿಗೆ ಅವರ ಮೇಲೆ ಕನಿಕರವುಂಟಾಯಿತು. ಅವರ ಕಣ್ಣುಗಳನ್ನು ಮುಟ್ಟಿದರು. ಅದೇ ಕ್ಷಣದಲ್ಲಿ ಅವರಿಗೆ ದೃಷ್ಟಿಬಂದಿತು. ಅವರೂ ಯೇಸುವನ್ನು ಹಿಂಬಾಲಿಸಿದರು.</verse>
			</chapter>
			<chapter number="21">
				<verse number="1">ಯೇಸುಸ್ವಾಮಿ ಮತ್ತು ಅವರ ಜೊತೆಯಲ್ಲಿದ್ದವರು ಜೆರುಸಲೇಮನ್ನು ಸಮೀಪಿಸಿದರು. ಓಲಿವ್ ಗುಡ್ಡದ ಬಳಿಯಿರುವ ಬೆತ್ಫಗೆ ಎಂಬ ಊರನ್ನು ಸೇರಿದರು.</verse>
				<verse number="2">ಅಲ್ಲಿ ಯೇಸು ಇಬ್ಬರು ಶಿಷ್ಯರನ್ನು ಕರೆದು, “ನಿಮ್ಮೆದುರಿಗೆ ಇರುವ ಆ ಹಳ್ಳಿಗೆ ಹೋಗಿರಿ. ಅಲ್ಲಿ ಕಟ್ಟಿಹಾಕಿರುವ ಒಂದು ಹೇಸರಗತ್ತೆಯನ್ನೂ ಅದರ ಮರಿಯನ್ನೂ ಕಾಣುವಿರಿ. ಅವುಗಳನ್ನು ಬಿಚ್ಚಿ ನನ್ನ ಬಳಿಗೆ ತನ್ನಿರಿ.</verse>
				<verse number="3">ಯಾವನಾದರೂ ನಿಮ್ಮನ್ನು ಏನಾದರೂ ಕೇಳಿದರೆ, ‘ಇವು ಪ್ರಭುವಿಗೆ ಬೇಕಾಗಿವೆ’ ಎನ್ನಿ. ಅವನು ತಕ್ಷಣ ಕಳುಹಿಸಿಕೊಡುವನು,” ಎಂದು ಹೇಳಿಕಳುಹಿಸಿದರು.</verse>
				<verse number="4">‘ಸಿಯೋನ್ ನಗರಿಗೆ ಹೇಳು: ನಿನ್ನರಸ ಬರುತಿಹನು ದೀನನವ ಹೇಸರಗತ್ತೆಯೇರಿ ಕುಳಿತಿಹನು ಮರಿಹೇಸರಗತ್ತೆಯನೇರಿ ಸಾಗಿಬರುತಿಹನು,’ ಎಂದು ಪ್ರವಾದಿಯೊಬ್ಬನ ವಚನ ನೆರವೇರುವಂತೆ ಇದೆಲ್ಲ ನಡೆಯಿತು.</verse>
				<verse number="5"></verse>
				<verse number="6">ಶಿಷ್ಯರು ಹೋಗಿ ಯೇಸು ತಮಗೆ ಅಪ್ಪಣೆಮಾಡಿದಂತೆಯೇ ಹೇಸರಗತ್ತೆಯನ್ನೂ ಮರಿಯನ್ನೂ ಅಟ್ಟಿಕೊಂಡು ಬಂದರು.</verse>
				<verse number="7">ತಮ್ಮ ಮೇಲಂಗಿಗಳನ್ನು ಅವುಗಳ ಮೇಲೆ ಹಾಸಿದರು. ಯೇಸು ಹತ್ತಿ ಕುಳಿತುಕೊಂಡರು.</verse>
				<verse number="8">ಜನಸಮೂಹದಲ್ಲಿ ಅನೇಕರು ತಮ್ಮ ಹೊದಿಕೆಗಳನ್ನು ದಾರಿಯಲ್ಲಿ ಹಾಸಿದರು. ಇತರರು ಮರದೆಲೆಗಳನ್ನು ಕೊಯ್ದು ದಾರಿಯಲ್ಲಿ ಹರಡಿದರು.</verse>
				<verse number="9">ಯೇಸುವಿನ ಹಿಂದೆಯೂ ಮುಂದೆಯೂ ಗುಂಪುಗುಂಪಾಗಿ ಹೋಗುತ್ತಿದ್ದ ಜನರು: “ದಾವೀದ ಕುಲಪುತ್ರನಿಗೆ ಜಯವಾಗಲಿ! ಸರ್ವೇಶ್ವರನ ನಾಮದಲಿ ಬರುವವನಿಗೆ ಮಂಗಳವಾಗಲಿ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!” ಎಂದು ಹರ್ಷೋದ್ಗಾರ ಮಾಡುತ್ತಿದ್ದರು.</verse>
				<verse number="10">ಹೀಗೆ ಯೇಸು ಜೆರುಸಲೇಮನ್ನು ಪ್ರವೇಶಿಸಿದಾಗ ನಗರಕ್ಕೆ ನಗರವೇ ಕಲಕಲಗೊಂಡಿತು. ಜನರು “ಯಾರಿವರು?” ಎಂದು ವಿಚಾರಿಸಲಾರಂಭಿಸಿದರು.</verse>
				<verse number="11">“ಇವರು ಗಲಿಲೇಯಕ್ಕೆ ಸೇರಿದ ನಜರೇತಿನ ಪ್ರವಾದಿ-ಯೇಸು,” ಎಂದು ಮಾರ್ದನಿಸಿತು ಜನರ ಗುಂಪು.</verse>
				<verse number="12">ಯೇಸುಸ್ವಾಮಿ ಮಹಾದೇವಾಲಯಕ್ಕೆ ಹೋದರು. ಅಲ್ಲಿ ಮಾರುತ್ತಿದ್ದವರನ್ನೂ ಕೊಳ್ಳುತ್ತಿದ್ದವರನ್ನೂ ಹೊರಗಟ್ಟಿದರು. ನಾಣ್ಯ ವಿನಿಮಯ ಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿದರು. ಪಾರಿವಾಳಗಳನ್ನು ಮಾರುತ್ತಿದ್ದವರ ಮಣೆಗಳನ್ನು ಉರುಳಿಸಿದರು.</verse>
				<verse number="13">ಅವರನ್ನು ಉದ್ದೇಶಿಸಿ, “ ‘ಪ್ರಾರ್ಥನಾಲಯವೀ ನನ್ನ ಆಲಯ’ ಎಂದು ಪವಿತ್ರ ಗ್ರಂಥದಲ್ಲೇ ಲಿಖಿತವಾಗಿದೆ. ನೀವಾದರೋ ಇದನ್ನು ಕಳ್ಳಕಾಕರ ಗುಹೆಯನ್ನಾಗಿಸುತ್ತಿದ್ದೀರಿ,” ಎಂದು ಎಚ್ಚರಿಸಿದರು.</verse>
				<verse number="14">ದೇವಾಲಯದಲ್ಲಿ ತಮ್ಮ ಬಳಿಗೆ ಬಂದ ಕುರುಡರನ್ನೂ ಕುಂಟರನ್ನೂ ಯೇಸು ಸ್ವಸ್ಥಪಡಿಸಿದರು.</verse>
				<verse number="15">ಅವರು ಮಾಡಿದ ಅತಿಶಯ ಕಾರ್ಯಗಳನ್ನು ಮುಖ್ಯಯಾಜಕರು ಹಾಗೂ ಧರ್ಮಶಾಸ್ತ್ರಿಗಳು ನೋಡಿದರು. ದೇವಾಲಯದಲ್ಲಿ ಮಕ್ಕಳು, ‘ದಾವೀದಕುಲಪುತ್ರನಿಗೆ ಜಯವಾಗಲಿ’ ಎಂದು ಘೋಷಿಸುವುದನ್ನು ಕೇಳಿದರು.</verse>
				<verse number="16">“ಮಕ್ಕಳು ಹೇಳುವುದು ನಿನಗೆ ಕೇಳಿಸುತ್ತಿದೆಯೋ?” ಎಂದು ಕೋಪಾವೇಶದಿಂದ ಯೇಸುವನ್ನು ಪ್ರಶ್ನಿಸಿದರು. “ಹೌದು, ಕೇಳಿಸುತ್ತದೆ; ‘ಬಾಲಬಾಲೆಯರ ಬಾಯಿಂದಲೂ ಮೊಲೆಗೂಸುಗಳ ನಾಲಿಗೆಯಿಂದಲೂ ನಿಮಗೆ ಸರ್ವಸ್ತುತಿ ಸಲ್ಲುವಂತೆ ಮಾಡಿದ್ದೀರಿ’ ಎಂಬ ವಾಕ್ಯವನ್ನು ನೀವು ಪವಿತ್ರಗ್ರಂಥದಲ್ಲಿ ಎಂದೂ ಓದಿಲ್ಲವೆ?” ಎಂದು ಉತ್ತರಿಸಿದರು.</verse>
				<verse number="17">ಅನಂತರ ಅವರನ್ನು ಬಿಟ್ಟು ಪಟ್ಟಣದಿಂದ ಹೊರಟರು. ಬೆಥಾನಿಯಕ್ಕೆ ಬಂದು ರಾತ್ರಿಯನ್ನು ಅಲ್ಲೇ ಕಳೆದರು.</verse>
				<verse number="18">ಮಾರನೆಯ ದಿನ ಬೆಳಿಗ್ಗೆ ಯೇಸುಸ್ವಾಮಿ ಪುನಃ ಪಟ್ಟಣಕ್ಕೆ ಬರುತ್ತಿದ್ದಾಗ ಅವರಿಗೆ ಹಸಿವಾಯಿತು.</verse>
				<verse number="19">ದಾರಿಯ ಪಕ್ಕದಲ್ಲಿ ಒಂದು ಅಂಜೂರದ ಮರ ಕಣ್ಣಿಗೆ ಬಿದ್ದಿತು. ಹತ್ತಿರಕ್ಕೆ ಹೋಗಿ ನೋಡುವಾಗ ಅದರಲ್ಲಿ ಬರೀ ಎಲೆಗಳೇ ಹೊರತು ಮತ್ತೇನೂ ಕಾಣಲಿಲ್ಲ. ಯೇಸು ಆ ಮರಕ್ಕೆ, “ಇನ್ನು ಮುಂದೆ ನೀನೆಂದಿಗೂ ಹಣ್ಣುಬಿಡದಂತಾಗಲಿ,” ಎಂದರು. ಅದೇ ಕ್ಷಣದಲ್ಲಿ ಆ ಮರ ಒಣಗಿಹೋಯಿತು.</verse>
				<verse number="20">ಇದನ್ನು ನೋಡಿ ಶಿಷ್ಯರು ನಿಬ್ಬೆರಗಾದರು. “ಈ ಅಂಜೂರದ ಮರ ಇಷ್ಟು ಬೇಗನೆ ಹೇಗೆ ಒಣಗಿಹೋಯಿತು?” ಎಂದು ಕೇಳಿದರು.</verse>
				<verse number="21">ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ: ನೀವು ಸಂಶಯಪಡದೆ ವಿಶ್ವಾಸಿಸಿದರೆ ಈ ಅಂಜೂರದ ಮರಕ್ಕೆ ನಾನು ಏನು ಮಾಡಿದೆನೋ ನೀವೂ ಅಂತೆಯೇ ಮಾಡುವಿರಿ; ಅದು ಮಾತ್ರವಲ್ಲ, ಈ ಬೆಟ್ಟಕ್ಕೆ, ‘ನೀನು ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು,’ ಎಂದು ನೀವು ಹೇಳಿದರೆ, ಅದು ಹಾಗೆಯೇ ಆಗುವುದು.</verse>
				<verse number="22">ವಿಶ್ವಾಸವಿಟ್ಟು, ಏನನ್ನು ಪ್ರಾರ್ಥನೆಯಲ್ಲಿ ನೀವು ಬೇಡಿಕೊಳ್ಳುವಿರೋ, ಅದನ್ನೆಲ್ಲಾ ಪಡೆಯುವಿರಿ,” ಎಂದು ಉತ್ತರಿಸಿದರು.</verse>
				<verse number="23">ತರುವಾಯ ಯೇಸುಸ್ವಾಮಿ ಮಹಾದೇವಾಲಯದ ಒಳಕ್ಕೆ ಹೋಗಿ ಅಲ್ಲಿ ಬೋಧನೆಮಾಡತೊಡಗಿದರು. ಮುಖ್ಯಯಾಜಕರೂ ಪ್ರಜಾಪ್ರಮುಖರೂ ಅವರ ಬಳಿಗೆ ಬಂದು, “ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರಾರು?” ಎಂದು ಪ್ರಶ್ನಿಸಿದರು.</verse>
				<verse number="24">ಅದಕ್ಕೆ ಯೇಸು, “ನಾನು ನಿಮಗೆ ಒಂದು ಪ್ರಶ್ನೆ ಕೇಳುತ್ತೇನೆ; ಅದಕ್ಕೆ ನೀವು ಉತ್ತರಕೊಟ್ಟರೆ ನಾನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿದ್ದೇನೆಂದು ನಿಮಗೆ ತಿಳಿಸುತ್ತೇನೆ.</verse>
				<verse number="25">'ಸ್ನಾನದೀಕ್ಷೆ ಕೊಡುವ ಅಧಿಕಾರ ಯೊವಾನ್ನನಿಗೆ ಎಲ್ಲಿಂದ ಬಂದಿತು? ದೇವರಿಂದಲೋ, ಮನುಷ್ಯರಿಂದಲೋ?’ “ ಎಂದು ಕೇಳಿದರು.</verse>
				<verse number="26">ಅದಕ್ಕೆ ಅವರು ತಮ್ಮತಮ್ಮೊಳಗೇ ಹೀಗೆಂದು ತರ್ಕಮಾಡಲಾರಂಭಿಸಿದರು: “ದೇವರಿಂದ ಬಂತು ಎಂದು ಉತ್ತರಿಸಿದರೆ, ‘ಹಾಗಾದರೆ ನೀವೇಕೆ ಆತನನ್ನು ನಂಬಲಿಲ್ಲ?’ ಎಂದು ಕೇಳುವನು. ‘ಮನುಷ್ಯರಿಂದ ಬಂತು’ ಎಂದು ಹೇಳಿದೆವಾದರೆ ಜನಸಮೂಹಕ್ಕೆ ನಾವು ಭಯಪಡಬೇಕಾಗಿದೆ. ಏಕೆಂದರೆ ಯೊವಾನ್ನನು ಒಬ್ಬ ಪ್ರವಾದಿಯೆಂದು ಸರ್ವರೂ ಸನ್ಮಾನಿಸುತ್ತಾರೆ,” ಎಂದುಕೊಂಡರು.</verse>
				<verse number="27">ಬಳಿಕ ಬಂದು, “ನಮಗೆ ಗೊತ್ತಿಲ್ಲ,” ಎಂದು ಯೇಸುವಿಗೆ ಉತ್ತರಕೊಟ್ಟರು. ಆಗ ಯೇಸು, “ಹಾಗಾದರೆ, ನಾನು ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.</verse>
				<verse number="28">“ಈ ಬಗ್ಗೆ ನಿಮಗೇನು ಅನಿಸುತ್ತದೆ? ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರು. ಒಮ್ಮೆ ಆತ ಮೊದಲನೆಯ ಮಗನ ಹತ್ತಿರ ಬಂದು, ‘ಮಗನೇ, ಈ ಹೊತ್ತು ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡು’ ಎಂದ.</verse>
				<verse number="29">ಅದಕ್ಕೆ ಅವನು, ‘ನಾನು ಹೋಗುವುದಿಲ್ಲ’ ಎಂದು ಉತ್ತರವಿತ್ತ. ಆದರೂ ಅನಂತರ ಪಶ್ಚಾತ್ತಾಪಪಟ್ಟು ಅವನು ತೋಟಕ್ಕೆ ಹೋದ.</verse>
				<verse number="30">ತಂದೆ ಎರಡನೆಯ ಮಗನ ಹತ್ತಿರ ಹೋಗಿ ಅಂತೆಯೇ ತೋಟಕ್ಕೆ ಹೋಗಲು ಹೇಳಿದ. ಅವನು, ‘ಇಗೋ, ಹೋಗುತ್ತೇನಪ್ಪಾ’, ಎಂದು ಹೇಳಿದ. ಆದರೆ ಹೋಗಲೇ ಇಲ್ಲ.</verse>
				<verse number="31">ಇವರಿಬ್ಬರಲ್ಲಿ ತಂದೆಯ ಇಷ್ಟದಂತೆ ನಡೆದವನು ಯಾರು?” ಎಂದು ಯೇಸು ಕೇಳಿದರು. “ಮೊದಲನೆಯ ಮಗನೇ,” ಎಂದು ಉತ್ತರಿಸಿದರು ಅವರು. ಆಗ ಯೇಸುಸ್ವಾಮಿ, “ಸುಂಕದವರೂ ವೇಶ್ಯೆಯರೂ ನಿಮಗಿಂತ ಮೊದಲೇ ದೇವರಸಾಮ್ರಾಜ್ಯವನ್ನು ಪ್ರವೇಶಿಸುವರು ಎಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.</verse>
				<verse number="32">ಸ್ನಾನಿಕ ಯೊವಾನ್ನನು ಧರ್ಮಮಾರ್ಗವನ್ನು ತೋರಿಸಲು ಬಂದನು. ನೀವು ಆತನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಆತನನ್ನು ನಂಬಿದರು. ಇದನ್ನು ಕಂಡ ಮೇಲೂ ನೀವು ಪಶ್ಚಾತ್ತಾಪಪಡಲಿಲ್ಲ, ಯೊವಾನ್ನನನ್ನು ನಂಬಲೂ ಇಲ್ಲ.</verse>
				<verse number="33">“ಇನ್ನೊಂದು ಸಾಮತಿಗೆ ಕಿವಿಗೊಡಿ: ಒಬ್ಬ ಯಜಮಾನ ಒಂದು ದ್ರಾಕ್ಷಿತೋಟ ಮಾಡಿಸಿದ. ಅದರ ಸುತ್ತ ಬೇಲಿಯನ್ನು ಹಾಕಿಸಿದ. ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಅನಂತರ ಅದನ್ನು ಗೇಣಿದಾರರಿಗೆ ವಹಿಸಿ ಹೊರನಾಡಿಗೆ ಹೊರಟುಹೋದ.</verse>
				<verse number="34">ಫಲಕೊಡುವ ಕಾಲ ಹತ್ತಿರವಾದಾಗ, ತನಗೆ ಬರಬೇಕಾದ ಪಾಲನ್ನು ತರುವುದಕ್ಕಾಗಿ ಆಳುಗಳನ್ನು ಗೇಣಿದಾರರ ಬಳಿಗೆ ಕಳುಹಿಸಿದ.</verse>
				<verse number="35">ಇವರು ಆ ಆಳುಗಳ ಮೇಲೆ ಬಿದ್ದು ಒಬ್ಬನನ್ನು ಬಡಿದರು, ಇನ್ನೊಬ್ಬನನ್ನು ಕಡಿದರು, ಮತ್ತೊಬ್ಬನ ಮೇಲೆ ಕಲ್ಲು ತೂರಿದರು.</verse>
				<verse number="36">ತೋಟದ ಯಜಮಾನ ಮೊದಲಿಗಿಂತಲೂ ಹೆಚ್ಚು ಆಳುಗಳನ್ನು ಕಳುಹಿಸಿದ. ಅವರಿಗೂ ಅದೇ ಗತಿ ಆಯಿತು.</verse>
				<verse number="37">ಕಟ್ಟಕಡೆಗೆ ಯಜಮಾನ, ‘ನನ್ನ ಮಗನಿಗೆ ಇವರು ಮರ್ಯಾದೆ ಕೊಟ್ಟೇಕೊಡುವರು’ ಎಂದುಕೊಂಡು ತನ್ನ ಮಗನನ್ನೇ ಕಳುಹಿಸಿದ.</verse>
				<verse number="38">ಆದರೆ ಗೇಣಿದಾರರು ಮಗನನ್ನು ಕಂಡೊಡನೇ, ‘ಈ ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ಮುಗಿಸಿಬಿಡೋಣ. ಇವನಿಗೆ ಬರುವ ಸೊತ್ತನ್ನು ನಮ್ಮದಾಗಿಸಿಕೊಳ್ಳೋಣ,’ ಎಂದು ತಮ್ಮ ತಮ್ಮಲ್ಲೇ ಒಳಸಂಚು ಮಾಡಿಕೊಂಡರು.</verse>
				<verse number="39">ಅಂತೆಯೇ ಅವನನ್ನು ಹಿಡಿದು, ತೋಟದಿಂದ ಹೊರಕ್ಕೆ ದಬ್ಬಿಕೊಂಡುಹೋಗಿ, ಕೊಂದುಹಾಕಿದರು.</verse>
				<verse number="40">“ಈಗ ನೀವೇ ಹೇಳಿ: ತೋಟದ ಯಜಮಾನ ಬಂದಾಗ ಆ ಗೇಣಿದಾರರಿಗೆ ಏನುಮಾಡುವನು?” ಎಂದು ಯೇಸು ಕೇಳಿದರು.</verse>
				<verse number="41">“ಆ ಕೇಡಿಗರನ್ನು ಕ್ರೂರವಾಗಿ ಸಂಹರಿಸುವನು. ತರುವಾಯ ಕಾಲಕಾಲಕ್ಕೆ ಸರಿಯಾಗಿ ಪಾಲನ್ನು ಸಲ್ಲಿಸುವ ಬೇರೆಯವರಿಗೆ ತೋಟವನ್ನು ಗೇಣಿಗೆ ಕೊಡುವನು,” ಎಂದು ಅಲ್ಲಿದ್ದವರು ಉತ್ತರಕೊಟ್ಟರು.</verse>
				<verse number="42">ಬಳಿಕ ಯೇಸು ಇಂತೆಂದರು: “ ‘ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಆ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು! ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ!’ ಎಂಬ ವಾಕ್ಯವನ್ನು ನೀವು ಪವಿತ್ರಗ್ರಂಥದಲ್ಲಿ ಓದಿಲ್ಲವೆ?</verse>
				<verse number="43">ಆದುದರಿಂದ ನಾನು ನಿಮಗೆ ಹೇಳುತ್ತೇನೆ, ‘ದೇವರ ಸಾಮ್ರಾಜ್ಯವನ್ನು ನಿಮ್ಮಿಂದ ಕಿತ್ತುಕೊಂಡು ತಕ್ಕ ಫಲಕೊಡುವ ಜನತೆಗೆ ನೀಡಲಾಗುವುದು.</verse>
				<verse number="44">ಅಷ್ಟೇ ಅಲ್ಲದೆ, ಆ ಕಲ್ಲಿನ ಮೇಲೆ ಬೀಳುವವನು ಛಿದ್ರಛಿದ್ರನಾಗುವನು. ಯಾವನ ಮೇಲೆ ಆ ಕಲ್ಲು ಬೀಳುವುದೋ ಅವನು ಜಜ್ಜಿಹೋಗುವನು’.”</verse>
				<verse number="45">ಮುಖ್ಯಯಾಜಕರೂ ಫರಿಸಾಯರೂ ಸ್ವಾಮಿ ಹೇಳಿದ ಸಾಮತಿಗಳನ್ನು ಕೇಳಿ, ‘ಇವನು ನಮ್ಮನ್ನು ಕುರಿತೇ ಹೀಗೆ ಮಾತನಾಡುತ್ತಿದ್ದಾನೆ,’ ಎಂದು ಅರ್ಥಮಾಡಿಕೊಂಡರು. ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು.</verse>
				<verse number="46">ಆದರೆ ಜನಸಮೂಹಕ್ಕೆ ಭಯಪಟ್ಟರು. ಏಕೆಂದರೆ, ಜನರು ಯೇಸುವನ್ನು ಪ್ರವಾದಿ ಎಂದು ಸನ್ಮಾನಿಸುತ್ತಿದ್ದರು.</verse>
			</chapter>
			<chapter number="22">
				<verse number="1">ಯೇಸುಸ್ವಾಮಿ ಮತ್ತೆ ಅವರೊಡನೆ ಸಾಮತಿಗಳಲ್ಲೇ ಮಾತನಾಡಿದರು: “ಸ್ವರ್ಗಸಾಮ್ರಾಜ್ಯ ಇಂತಿದೆ;</verse>
				<verse number="2">ರಾಜನೊಬ್ಬ ತನ್ನ ಕುಮಾರನ ವಿವಾಹ ಮಹೋತ್ಸವವನ್ನು ಏರ್ಪಡಿಸಿದ.</verse>
				<verse number="3">ಅದಕ್ಕೆ ಆಹ್ವಾನಿತರಾಗಿದ್ದವರನ್ನು ಕರೆಯಲು ಸೇವಕರನ್ನು ಕಳುಹಿಸಿದ. ಆದರೆ ಅವರು ಬರಲು ಒಪ್ಪಲಿಲ್ಲ.</verse>
				<verse number="4">ಪುನಃ ಬೇರೆ ಸೇವಕರನ್ನು ಅಟ್ಟಿದ. ‘ಔತಣ ಸಿದ್ಧವಾಗಿದೆ. ಕೊಬ್ಬಿನ ಮಾಂಸದ ಅಡಿಗೆಯನ್ನು ಮಾಡಿಸಿದ್ದೇನೆ. ಎಲ್ಲವೂ ಅಣಿಯಾಗಿದೆ. ಉತ್ಸವಕ್ಕೆ ಬೇಗ ಬನ್ನಿ’ ಎಂದು ಆಹ್ವಾನಿತರಿಗೆ ತಿಳಿಸುವಂತೆ ಹೇಳಿಕಳುಹಿಸಿದ.</verse>
				<verse number="5">ಆದರೂ ಆಹ್ವಾನಿತರು ಅಲಕ್ಷ್ಯಮಾಡಿದರು. ಒಬ್ಬ ತೋಟಕ್ಕೆ ಹೊರಟುಬಿಟ್ಟ, ಇನ್ನೊಬ್ಬ ವ್ಯಾಪಾರಕ್ಕೆ ಹೊರಟುಹೋದ.</verse>
				<verse number="6">ಉಳಿದವರು, ಕರೆಯಲು ಬಂದ ಆಳುಗಳನ್ನೇ ನಿಂದಿಸಿ, ಬಡಿದು, ಕೊಂದುಹಾಕಿದರು.</verse>
				<verse number="7">ರಾಜನಿಗೆ ಕಡುಗೋಪ ಬಂದಿತು. ತನ್ನ ಸೈನಿಕರನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹರಿಸಿದ. ಅವರ ಊರನ್ನು ಸುಟ್ಟುಹಾಕಿಸಿದ.</verse>
				<verse number="8">ಅನಂತರ ತನ್ನ ಸೇವಕರಿಗೆ, ‘ವಿವಾಹ ಮಹೋತ್ಸವವೇನೋ ಸಿದ್ಧವಾಗಿದೆ; ಆಹ್ವಾನಿತರೋ ಅಯೋಗ್ಯರು.</verse>
				<verse number="9">ನೀವು ಹೆದ್ದಾರಿಗಳಿಗೆ ಹೋಗಿ ಕಂಡಕಂಡವರನ್ನೆಲ್ಲಾ ಉತ್ಸವಕ್ಕೆ ಕರೆಯಿರಿ’ ಎಂದ.</verse>
				<verse number="10">ಅಂತೆಯೇ ಅವರು ಹೋಗಿ ಯೋಗ್ಯರು, ಅಯೋಗ್ಯರೆನ್ನದೆ ಕಂಡವರನ್ನೆಲ್ಲಾ ಒಟ್ಟುಗೂಡಿಸಿ ಕರೆದುತಂದರು. ವಿವಾಹ ಮಂಟಪ ಅತಿಥಿಗಳಿಂದ ತುಂಬಿಹೋಯಿತು.</verse>
				<verse number="11">“ಆಮೇಲೆ ರಾಜನು ಅತಿಥಿಗಳನ್ನು ನೋಡಲುಬಂದ. ಅಲ್ಲಿ ವಿವಾಹಕ್ಕೆ ತಕ್ಕ ವಸ್ತ್ರವನ್ನು ಧರಿಸದೆ ಬಂದಿದ್ದ ಒಬ್ಬನನ್ನು ಕಂಡ.</verse>
				<verse number="12">‘ಏನಯ್ಯ, ಸಮಾರಂಭಕ್ಕೆ ತಕ್ಕ ಉಡುಪಿಲ್ಲದೆ ಒಳಗೆ ಹೇಗೆ ಬಂದೆ?’ ಎಂದು ಅವನನ್ನು ಕೇಳಿದ. ಅದಕ್ಕೆ ಅವನು ಮೌನತಳೆದ.</verse>
				<verse number="13">ಆಗ ರಾಜನು ಪರಿಚಾರಕರಿಗೆ, ‘ಇವನ ಕೈಕಾಲುಗಳನ್ನು ಕಟ್ಟಿ ಹೊರಗಿನ ಕತ್ತಲೆಗೆ ದಬ್ಬಿರಿ; ಅಲ್ಲಿರುವವರೊಡನೆ ಹಲ್ಲುಕಡಿದು ಗೋಳಾಡಲಿ,’ ಎಂದು ಹೇಳಿದ.</verse>
				<verse number="14">“ಹೀಗೆ, ಆಹ್ವಾನಿತರು ಅನೇಕರಾದರೂ ಆರಿಸಲಾದವರು ಕೆಲವರು ಮಾತ್ರ,” ಎಂದರು ಸ್ವಾಮಿ.</verse>
				<verse number="15">ಅನಂತರ ಫರಿಸಾಯರು ಒಟ್ಟುಗೂಡಿ ಯೇಸುವನ್ನು ಹೇಗೆ ಮಾತಿನಲ್ಲಿ ಸಿಕ್ಕಿಸುವುದೆಂದು ಸಮಾಲೋಚನೆ ಮಾಡಿಕೊಂಡರು.</verse>
				<verse number="16">ತಮ್ಮ ಶಿಷ್ಯರನ್ನು ಹೆರೋದನ ಪಕ್ಷದ ಕೆಲವರ ಸಮೇತ ಸ್ವಾಮಿಯ ಬಳಿಗೆ ಕಳುಹಿಸಿದರು. ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು; ಎಂದೇ, ಸ್ಥಾನಮಾನಗಳಿಗೆ ಮಣಿಯದವರು. ಇದೆಲ್ಲಾ ನಮಗೆ ಚೆನ್ನಾಗಿ ಗೊತ್ತಿದೆ.</verse>
				<verse number="17">ಹೀಗಿರುವಲ್ಲಿ ರೋಮ್ ಚಕ್ರಾಧಿಪತಿಗೆ ತೆರಿಗೆಕೊಡುವುದು ಧರ್ಮಸಮ್ಮತವೋ ಅಲ್ಲವೋ, ನಿಮ್ಮ ಅಭಿಪ್ರಾಯವನ್ನು ನಮಗೆ ತಿಳಿಸುವಿರಾ?” ಎಂದು ಕೇಳಿದರು.</verse>
				<verse number="18">ಯೇಸು ಅವರ ಕುತಂತ್ರವನ್ನು ಅರಿತುಕೊಂಡು, “ಕಪಟಿಗಳೇ, ನನ್ನನ್ನೇಕೆ ಪರೀಕ್ಷಿಸುತ್ತೀರಿ?</verse>
				<verse number="19">ತೆರಿಗೆಗೆಂದು ಕೊಡಬೇಕಾದ ನಾಣ್ಯವನ್ನು ತೋರಿಸಿ,” ಎಂದರು. ಅವರೊಂದು ನಾಣ್ಯವನ್ನು ತಂದುಕೊಟ್ಟರು.</verse>
				<verse number="20">ಆಗ ಯೇಸು, “ಇದರಲ್ಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಕೇಳಿದರು.</verse>
				<verse number="21">ಅದಕ್ಕೆ ಅವರು, “ರೋಮ್ ಚಕ್ರವರ್ತಿಯವು,” ಎಂದರು. “ಹಾಗಾದರೆ, ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದು ಯೇಸು ಉತ್ತರಕೊಟ್ಟರು.</verse>
				<verse number="22">ಈ ಮಾತುಗಳನ್ನು ಕೇಳಿ ಅವರೆಲ್ಲರು ಬೆರಗಾದರು; ಯೇಸುವನ್ನು ಬಿಟ್ಟು ಅಲ್ಲಿಂದ ಹೊರಟೇಹೋದರು.</verse>
				<verse number="23">ಅದೇ ದಿನ ‘ಸದ್ದುಕಾಯರು’ ಯೇಸುಸ್ವಾಮಿಯ ಬಳಿಗೆ ಬಂದರು. ಸತ್ತಮೇಲೆ ಪುನರುತ್ಥಾನ ಇಲ್ಲ ಎಂಬುದು ಅವರ ಅಭಿಮತ.</verse>
				<verse number="24">ಅವರು ಸ್ವಾಮಿಯನ್ನು ಹೀಗೆಂದು ಪ್ರಶ್ನಿಸಿದರು: “ಬೋಧಕರೇ, ಮಕ್ಕಳಿಲ್ಲದೆ ಒಬ್ಬನು ಸತ್ತುಹೋದರೆ ಅವನ ಹೆಂಡತಿಯನ್ನು ತಮ್ಮನು ಮದುವೆಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,” ಎಂದು ಮೋಶೆ ಹೇಳಿದ್ದಾನಷ್ಟೆ.</verse>
				<verse number="25">ಒಮ್ಮೆ ನಮ್ಮಲ್ಲಿ ಏಳುಮಂದಿ ಅಣ್ಣತಮ್ಮಂದಿರು ಇದ್ದರು. ಅವರಲ್ಲಿ ಮೊದಲನೆಯವನು ಮದುವೆಯಾದ, ಸಂತಾನವಿಲ್ಲದೆ ಸತ್ತುಹೋದ. ಈ ಕಾರಣ ತನ್ನ ಹೆಂಡತಿಯನ್ನು ತಮ್ಮನಿಗೆ ಬಿಟ್ಟುಹೋದ.</verse>
				<verse number="26">ಅದರಂತೆಯೇ ಎರಡನೆಯವ, ಮೂರನೆಯವ, ಹೀಗೆ ಏಳನೆಯವನವರೆಗೂ ಸಂಭವಿಸಿತು.</verse>
				<verse number="27">ಅವರೆಲ್ಲರೂ ತೀರಿಹೋದ ಮೇಲೆ ಆ ಹೆಂಗಸೂ ಸತ್ತುಹೋದಳು.</verse>
				<verse number="28">ಹೀಗಿರುವಲ್ಲಿ, ಪುನರುತ್ಥಾನದ ದಿನ ಆಕೆ ಆ ಏಳುಮಂದಿ ಅಣ್ಣತಮ್ಮಂದಿರಲ್ಲಿ ಯಾರಿಗೆ ಮಡದಿಯಾಗುವಳು? ಅವರೆಲ್ಲರೂ ಆಕೆಯನ್ನು ಮದುವೆಯಾಗಿದ್ದರಲ್ಲವೇ?” ಎಂದರು.</verse>
				<verse number="29">ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನಿಮ್ಮ ಅಭಿಪ್ರಾಯ ತಪ್ಪು. ಪವಿತ್ರಗ್ರಂಥವನ್ನಾಗಲಿ, ದೇವರ ಶಕ್ತಿಯನ್ನಾಗಲಿ ನೀವು ಅರ್ಥಮಾಡಿಕೊಂಡಿಲ್ಲ.</verse>
				<verse number="30">ಪುನರುತ್ಥಾನ ಹೊಂದಿದ ಮೇಲೆ ಜನರು ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಸ್ವರ್ಗದ ದೇವದೂತರಂತೆ ಅವರು ಇರುತ್ತಾರೆ.</verse>
				<verse number="31">ಇದಲ್ಲದೆ, ಸತ್ತವರು ಪುನರುತ್ಥಾನ ಹೊಂದುವ ವಿಷಯದಲ್ಲಿ ಹೇಳುವುದಾದರೆ,</verse>
				<verse number="32">‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು ಆಗಿದ್ದೇನೆ,’ ಎಂದು ದೇವರೇ ನಿಮಗೆ ಹೇಳಿರುವುದನ್ನು ನೀವು ಓದಿಲ್ಲವೆ? ಹೀಗಿರುವಾಗ ಅವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ,” ಎಂದರು.</verse>
				<verse number="33">ಇದನ್ನು ಕೇಳಿದ ಜನರ ಗುಂಪು ಯೇಸುವಿನ ಬೋಧನೆಯನ್ನು ಕುರಿತು ಅತ್ಯಾಶ್ಚರ್ಯಪಟ್ಟಿತು.</verse>
				<verse number="34">ಯೇಸುಸ್ವಾಮಿ ‘ಸದ್ದುಕಾಯ’ರನ್ನು ಸದ್ದೆತ್ತದಂತೆ ಮಾಡಿದರೆಂಬ ಸಮಾಚಾರ ಫರಿಸಾಯರಿಗೆ ಮುಟ್ಟಿತು. ಅವರು ಒಟ್ಟಾಗಿ ಸ್ವಾಮಿಯ ಬಳಿಗೆ ಬಂದರು.</verse>
				<verse number="35">ಅವರಲ್ಲಿ ಒಬ್ಬ ಧರ್ಮೋಪದೇಶಕನು ಯೇಸುವನ್ನು ಪರೀಕ್ಷಿಸುವ ಸಲುವಾಗಿ, ಹೀಗೆಂದು ಪ್ರಶ್ನಿಸಿದನು:</verse>
				<verse number="36">“ಬೋಧಕರೇ, ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ಆಜ್ಞೆ ಯಾವುದು?”</verse>
				<verse number="37">ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು.’</verse>
				<verse number="38">ಇದೇ ಪ್ರಮುಖ ಹಾಗೂ ಪ್ರಥಮ ಆಜ್ಞೆ.</verse>
				<verse number="39">ಇದಕ್ಕೆ ಸರಿಹೊಂದುವ ಎರಡನೇ ಆಜ್ಞೆ ಯಾವುದೆಂದರೆ, ‘ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು.’</verse>
				<verse number="40">ಸಮಸ್ತ ಧರ್ಮಶಾಸ್ತ್ರಕ್ಕೂ ಪ್ರವಾದಿಗಳ ಪ್ರವಚನಕ್ಕೂ ಈ ಎರಡು ಆಜ್ಞೆಗಳೇ ಆಧಾರ,” ಎಂದರು.</verse>
				<verse number="41">ಕೂಡಿಬಂದಿದ್ದ ಫರಿಸಾಯರಿಗೆ ಯೇಸು ಈ ಪ್ರಶ್ನೆ ಹಾಕಿದರು:</verse>
				<verse number="42">“ಅಭಿಷಿಕ್ತನಾದ ಲೋಕೋದ್ಧಾರಕನ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಆತ ಯಾರ ಮಗ?” ಅದಕ್ಕವರು, “ದಾವೀದನ ಪುತ್ರ” ಎಂದು ಉತ್ತರಿಸಿದರು.</verse>
				<verse number="43">ಆಗ ಯೇಸು, “ಹಾಗಾದರೆ, ದಾವೀದನೇ ಪವಿತ್ರಾತ್ಮ ಪ್ರೇರಣೆಯಿಂದ ಆತನನ್ನು ‘ಪ್ರಭು’ ಎಂದು ಕರೆದಿದ್ದಾನಲ್ಲಾ. ಅದು ಹೇಗೆ?</verse>
				<verse number="44">‘ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿ ಹಾಕುವ ತನಕ ನನ್ನ ಬಲಗಡೆ ಆಸೀನನಾಗಿರು ಎಂದು ನನ್ನ ‘ಪ್ರಭು’ವಿಗೆ ಸರ್ವೇಶ್ವರ ಹೇಳಿರುವರು.’ ಎಂದಿದ್ದಾನಲ್ಲವೆ?</verse>
				<verse number="45">“ಇಲ್ಲಿ ದಾವೀದನೇ ಆತನನ್ನು ‘ನನ್ನ ಪ್ರಭು’ ಎಂದು ಕರೆದಿರುವಾಗ ಆತ ದಾವೀದನಿಗೆ ಪುತ್ರನಾಗಿರುವುದು ಹೇಗೆ?” ಎಂದು ಕೇಳಿದರು.</verse>
				<verse number="46">ಇದಕ್ಕೆ ಉತ್ತರವಾಗಿ ಒಂದು ಮಾತು ಹೇಳಲೂ ಫರಿಸಾಯರಿಂದ ಆಗಲಿಲ್ಲ. ಅದು ಮಾತ್ರವಲ್ಲ, ಅಂದಿನಿಂದ ಯೇಸುವನ್ನು ಪ್ರಶ್ನಿಸಲು ಯಾರೂ ಧೈರ್ಯಗೊಳ್ಳಲಿಲ್ಲ.</verse>
			</chapter>
			<chapter number="23">
				<verse number="1">ಬಳಿಕ ಜನಸಮೂಹವನ್ನೂ ತಮ್ಮ ಶಿಷ್ಯರನ್ನೂ ಉದ್ದೇಶಿಸಿ ಯೇಸುಸ್ವಾಮಿ ಇಂತೆಂದರು:</verse>
				<verse number="2">“ಧರ್ಮಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಇದ್ದಾರೆ.</verse>
				<verse number="3">ಆದುದರಿಂದ ಅವರು ನಿಮಗೆ ಉಪದೇಶಿಸುವುದನ್ನೆಲ್ಲಾ ಆಲಿಸಿರಿ ಹಾಗೂ ಪಾಲಿಸಿರಿ. ಆದರೆ ಅವರ ನಡತೆಯನ್ನು ಅನುಸರಿಸಬೇಡಿ. ಏಕೆಂದರೆ ಅವರು ನುಡಿದಂತೆ ನಡೆಯುವುದಿಲ್ಲ.</verse>
				<verse number="4">ಭಾರವಾದ ಹಾಗೂ ಹೊರಲಾಗದ ಹೊರೆಗಳನ್ನು ಕಟ್ಟಿ ಮಾನವರ ಹೆಗಲ ಮೇಲೆ ಹೇರುತ್ತಾರೆ. ತಾವಾದರೋ ಅವನ್ನು ಕಿರುಬೆರಳಿನಿಂದಲೂ ಮುಟ್ಟಲೊಲ್ಲರು.</verse>
				<verse number="5">ತಾವು ಕೈಗೊಳ್ಳುವ ಕಾರ್ಯಗಳನ್ನೆಲ್ಲಾ ಜನರು ನೋಡಲೆಂದೇ ಮಾಡುತ್ತಾರೆ. ತಮ್ಮ ಧಾರ್ಮಿಕ ಹಣೆಪಟ್ಟಿಗಳನ್ನು ಅಗಲ ಮಾಡಿಕೊಳ್ಳುತ್ತಾರೆ. ಮೇಲಂಗಿಯ ಗೊಂಡೆಗಳನ್ನು ಉದ್ದುದ್ದ ಮಾಡಿಕೊಳ್ಳುತ್ತಾರೆ.</verse>
				<verse number="6">ಔತಣಕೂಟಗಳಲ್ಲಿ ಶ್ರೇಷ್ಠ ಸ್ಥಾನಮಾನಗಳನ್ನೂ ಪ್ರಾರ್ಥನಾಮಂದಿರಗಳಲ್ಲಿ ಉನ್ನತ ಆಸನಗಳನ್ನೂ ಪೇಟೆಬೀದಿಗಳಲ್ಲಿ ವಂದನೋಪಚಾರಗಳನ್ನೂ ಅವರು ಅಪೇಕ್ಷಿಸುತ್ತಾರೆ.</verse>
				<verse number="7">ಅದು ಮಾತ್ರವಲ್ಲ, ‘ಗುರುವೇ’ ಎಂದು ಕರೆಸಿಕೊಳ್ಳಲು ಇಚ್ಛಿಸುತ್ತಾರೆ.</verse>
				<verse number="8">ಹಾಗೆ ಕರೆಸಿಕೊಳ್ಳುವುದು ನಿಮಗೆ ಬೇಡ. ನಿಮಗಿರುವ ಗುರುವು ಒಬ್ಬರೇ ಮತ್ತು ನೀವೆಲ್ಲರೂ ಸಹೋದರರು.</verse>
				<verse number="9">ಇಹದಲ್ಲಿ ನೀವು ಯಾರನ್ನೂ ‘ಪಿತನೇ’ ಎಂದು ಸಂಬೋಧಿಸಬೇಡಿ. ಏಕೆಂದರೆ ನಿಮ್ಮ ಪಿತ ಒಬ್ಬರೇ. ಅವರು ಸ್ವರ್ಗದಲ್ಲಿದ್ದಾರೆ.</verse>
				<verse number="10">ಒಡೆಯ ಎಂದೂ ಕರೆಯಿಸಿಕೊಳ್ಳಬೇಡಿ; ಏಕೆಂದರೆ ನಿಮಗಿರುವ ಒಡೆಯ ಒಬ್ಬನೇ, ‘ಆತನೇ ಕ್ರಿಸ್ತ.’ ನಿಮ್ಮಲ್ಲಿ ಶ್ರೇಷ್ಠನು ಯಾರೋ ಅವನು ನಿಮ್ಮ ಸೇವಕನಾಗಿರಬೇಕು.</verse>
				<verse number="11">ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವ ಪ್ರತಿಯೊಬ್ಬನನ್ನೂ ದೇವರು ಕೆಳಗಿಳಿಸುವರು.</verse>
				<verse number="12">ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು.</verse>
				<verse number="13">“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಸ್ವರ್ಗಸಾಮ್ರಾಜ್ಯದ ದ್ವಾರಗಳನ್ನು ಮಾನವರಿಗೆ ಮುಚ್ಚಿದ್ದೀರಿ. ನೀವೂ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಲು ಯತ್ನಿಸುವವರನ್ನೂ ಬಿಡುವುದಿಲ್ಲ.</verse>
				<verse number="14">ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! (ವಿಧವೆಯರ ಮನೆಮಾರುಗಳನ್ನು ನೀವು ನುಂಗಿಬಿಡುತ್ತೀರಿ. ನಟನೆಗಾಗಿ ಉದ್ದುದ್ದ ಜಪತಪಗಳನ್ನು ಮಾಡುತ್ತೀರಿ, ನೀವು ಅತಿ ಕಠಿಣವಾದ ದಂಡನೆಗೆ ಗುರಿಯಾಗುವಿರಿ).</verse>
				<verse number="15">ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ಕೇವಲ ಒಬ್ಬ ವ್ಯಕ್ತಿಯನ್ನು ಮತಾಂತರಿಸಿಕೊಳ್ಳುವುದಕ್ಕಾಗಿ ಜಲನೆಲಗಳನ್ನು ಸುತ್ತಿ ಬರುತ್ತೀರಿ. ಮತಾಂತರಗೊಂಡ ಬಳಿಕವಾದರೋ ಅವನು ನಿಮಗಿಂತಲೂ ಇಮ್ಮಡಿ ನರಕಕ್ಕೆ ಗುರಿಯಾಗುವಂತೆ ಮಾಡುತ್ತೀರಿ.</verse>
				<verse number="16">“ಕುರುಡ ಮಾರ್ಗದರ್ಶಕರೇ, ನಿಮಗೆ ಧಿಕ್ಕಾರ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅವನು ಅದಕ್ಕೇನೂ ಬದ್ಧನಲ್ಲ. ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೋ, ಅವನು ಅದನ್ನು ನಡೆಸಿಯೇ ತೀರಬೇಕು ಎನ್ನುತ್ತೀರಿ.</verse>
				<verse number="17">ದೃಷ್ಟಿಗೆಟ್ಟ ಮತಿಭ್ರಷ್ಟರೇ, ಯಾವುದು ಶ್ರೇಷ್ಠ? ಚಿನ್ನವೋ, ಚಿನ್ನವನ್ನು ಪಾವನಗೊಳಿಸುವ ದೇವಾಲಯವೋ? ಅಂತೆಯೇ,</verse>
				<verse number="18">ಒಬ್ಬನು ಬಲಿಪೀಠದ ಮೇಲೆ ಆಣೆಯಿಟ್ಟರೆ ಅದಕ್ಕೇನೂ ಬದ್ಧನಲ್ಲ. ಬಲಿಪೀಠದ ಮೇಲಿರುವ ಕಾಣಿಕೆಗಳ ಮೇಲೆ ಆಣೆಯಿಟ್ಟರೋ, ಅದನ್ನು ಅವನು ನಡೆಸಿಯೇ ತೀರಬೇಕು ಎನ್ನುತ್ತೀರಿ.</verse>
				<verse number="19">ದೃಷ್ಟಿಹೀನರೇ! ಯಾವುದು ಶ್ರೇಷ್ಠ? ಕಾಣಿಕೆಯೋ, ಕಾಣಿಕೆಯನ್ನು ಪಾವನಗೊಳಿಸುವ ಬಲಿಪೀಠವೋ?</verse>
				<verse number="20">ಬಲಿಪೀಠದ ಮೇಲೆ ಆಣೆಯಿಡುವವನು ಬಲಿಪೀಠದ ಮೇಲೆ ಮಾತ್ರವಲ್ಲ, ಅದರ ಮೇಲಿರುವ ಪ್ರತಿಯೊಂದು ಕಾಣಿಕೆಯ ಮೇಲೂ ಆಣೆಯಿಡುತ್ತಾನೆ.</verse>
				<verse number="21">ದೇವಾಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಮಾತ್ರವಲ್ಲ, ಅದರಲ್ಲಿ ನೆಲೆಸುವ ದೇವರ ಮೇಲೂ ಆಣೆಯಿಡುತ್ತಾನೆ.</verse>
				<verse number="22">ಹಾಗೆಯೇ, ಸ್ವರ್ಗದ ಮೇಲೆ ಆಣೆಯಿಡುವವನು ದೇವರ ಸಿಂಹಾಸನದ ಮೇಲೂ ಅದರಲ್ಲಿ ಆಸೀನರಾಗಿರುವವರ ಮೇಲೂ ಆಣೆಯಿಡುತ್ತಾನೆ.</verse>
				<verse number="23">ಕಪಟ ಧರ್ಮಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದೀನ, ಸದಾಪ, ಜೀರಿಗೆ ಮುಂತಾದವುಗಳ ದಶಾಂಶವನ್ನು ದೇವರಿಗೆ ಸಲ್ಲಿಸುತ್ತೀರಿ. ಆದರೆ ಧರ್ಮಶಾಸ್ತ್ರದಲ್ಲಿ ಪ್ರಮುಖವಾದ ನ್ಯಾಯನೀತಿ, ದಯೆದಾಕ್ಷಿಣ್ಯ, ಪ್ರಾಮಾಣಿಕತೆ ಇವುಗಳನ್ನು ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡಬೇಕೆಂದು ಅಲ್ಲ, ಆದರೆ ಇವುಗಳನ್ನೂ ಅನುಷ್ಠಾನಕ್ಕೆ ತರಲೇಬೇಕಿತ್ತು.</verse>
				<verse number="24">ಅಂಧನಿರ್ದೇಶಕರೇ, ನೀವು ಸೊಳ್ಳೆಯನ್ನೇನೋ ಸೋಸುತ್ತೀರಿ, ಆದರೆ ಒಂಟೆಯನ್ನೇ ನುಂಗಿಬಿಡುತ್ತೀರಿ.</verse>
				<verse number="25">ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ನಿಮ್ಮ ತಟ್ಟೆಲೋಟಗಳ ಹೊರಭಾಗಗಳನ್ನೇನೋ ಶುಚಿಮಾಡುತ್ತೀರಿ; ಆದರೆ ಅವುಗಳ ಒಳಭಾಗ ಕೊಳ್ಳೆ ಹಾಗೂ ಲೋಭದ ಗಳಿಕೆಗಳಿಂದ ತುಂಬಿಹೋಗಿದೆ.</verse>
				<verse number="26">ಕುರುಡ ಫರಿಸಾಯನೇ, ಮೊತ್ತಮೊದಲು ತಟ್ಟೆಲೋಟಗಳ ಒಳಭಾಗವನ್ನು ತೊಳೆ, ಆಗ ಅವುಗಳ ಹೊರಭಾಗವೂ ಶುಚಿಯಾಗುವುದು.</verse>
				<verse number="27">“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಸುಣ್ಣ ಬಳಿದ ಸಮಾಧಿಗಳು. ಹೊರನೋಟಕ್ಕೇನೋ ಅವು ಥಳಕಾಗಿವೆ. ಒಳಗೋ ಸತ್ತವರ ಮೂಳೆಗಳಿಂದಲೂ ಕೊಳಕಿನಿಂದಲೂ ತುಂಬಿವೆ.</verse>
				<verse number="28">ಬಹಿರಂಗ ನೋಟಕ್ಕೆ ನೀವು ಸತ್ಪುರುಷರು. ಅಂತರಂಗದಲ್ಲಾದರೋ ಕಪಟ ಕಲ್ಮಶಗಳಿಂದ ತುಂಬಿದವರು.</verse>
				<verse number="29">“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪ್ರವಾದಿಗಳಿಗೆ ಗೋರಿಗಳನ್ನು ಕಟ್ಟಿಸುತ್ತೀರಿ.</verse>
				<verse number="30">ಸತ್ಪುರುಷರ ಸ್ಮಾರಕಗಳನ್ನು ಶೃಂಗರಿಸುತ್ತೀರಿ. ‘ನಮ್ಮ ಪೂರ್ವಜರ ಕಾಲದಲ್ಲಿ ನಾವು ಇದ್ದಿದ್ದರೆ ಪ್ರವಾದಿಗಳ ರಕ್ತಪಾತದಲ್ಲಿ ಭಾಗಿಗಳಾಗುತ್ತಿರಲಿಲ್ಲ’ ಎಂದುಕೊಳ್ಳುತ್ತೀರಿ.</verse>
				<verse number="31">ಹೀಗೆ ಪ್ರವಾದಿಗಳನ್ನು ಕೊಲೆಮಾಡಿದವರ ಪೀಳಿಗೆಗೆ ನೀವು ಸೇರಿದವರು ಎಂದು ನೀವೇ ಸಾಕ್ಷಿಕೊಡುತ್ತೀರಿ.</verse>
				<verse number="32">ಒಳ್ಳೆಯದು, ನಿಮ್ಮ ಪೂರ್ವಜರು ಪ್ರಾರಂಭಿಸಿದ್ದನ್ನು ನೀವು ಹೋಗಿ ಪೂರ್ಣಗೊಳಿಸಿರಿ.</verse>
				<verse number="33">“ಎಲೈ ಸರ್ಪಗಳೇ, ವಿಷಸರ್ಪಗಳ ಪೀಳಿಗೆಯೇ, ನರಕ ದಂಡನೆಯಿಂದ ನೀವು ಹೇಗೆ ತಾನೆ ಪಾರಾಗುವಿರಿ? ಇಗೋ ಕೇಳಿ: ‘ನಾನು ನಿಮ್ಮ ಬಳಿಗೆ ಪ್ರವಾದಿಗಳನ್ನೂ ಪಂಡಿತರನ್ನೂ ಧರ್ಮಶಾಸ್ತ್ರಿಗಳನ್ನೂ ಕಳುಹಿಸುತ್ತೇನೆ.</verse>
				<verse number="34">ಅವರಲ್ಲಿ ಕೆಲವರನ್ನು ಕೊಲೆಮಾಡುವಿರಿ, ಶಿಲುಬೆಗೆ ಏರಿಸುವಿರಿ, ಮತ್ತೆ ಕೆಲವರನ್ನು ನಿಮ್ಮ ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವಿರಿ. ಊರಿಂದೂರಿಗೆ ಅಟ್ಟಿ ಅವರನ್ನು ಪೀಡಿಸುವಿರಿ.</verse>
				<verse number="35">ಹೀಗೆ, ಪುನೀತ ಹೇಬೆಲನ ರಕ್ತ ಮೊದಲ್ಗೊಂಡು ಬಲಿಪೀಠಕ್ಕೂ ಗರ್ಭಗುಡಿಗೂ ನಡುವೆ ನೀವು ಕೊಲೆಮಾಡಿದ ಬರಕೀಯನ ಮಗ ಜಕರೀಯನ ರಕ್ತದವರೆಗೆ ಪೃಥ್ವಿಯಲ್ಲಿ ಸುರಿಸಲಾದ ಎಲ್ಲಾ ಸತ್ಪುರುಷರ ರಕ್ತದ ಹೊಣೆ ನಿಮ್ಮದೇ.</verse>
				<verse number="36">ಹೌದು, ಇದೆಲ್ಲವೂ ಈ ಪೀಳಿಗೆಯ ಮೇಲೆ ಬರುವುದೆಂದು ನಿಮಗೆ ಒತ್ತಿ ಹೇಳುತ್ತೇನೆ.</verse>
				<verse number="37">“ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿಯು ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆನು. ಆದರೆ ನೀವು ಒಪ್ಪಲಿಲ್ಲ.</verse>
				<verse number="38">ಇಗೋ, ನಿಮ್ಮ ದೇವಾಲಯ ಬರಿದಾಗುವುದು, ಪಾಳು ಬೀಳುವುದು.</verse>
				<verse number="39">ಏಕೆಂದರೆ, ‘ಸರ್ವೇಶ್ವರನ ನಾಮದಲ್ಲಿ ಬರುವವರು ಧನ್ಯರು!’ ಎಂದು ನೀವಾಗಿ ಹೇಳುವ ದಿನದವರೆಗೂ ನೀವು ನನ್ನನ್ನು ಮತ್ತೆ ಕಾಣಲಾರಿರಿ ಎಂಬುದು ನಿಶ್ಚಯ.”</verse>
			</chapter>
			<chapter number="24">
				<verse number="1">ಯೇಸುಸ್ವಾಮಿ ಮಹಾದೇವಾಲಯವನ್ನು ಬಿಟ್ಟುಹೋಗುತ್ತಿದ್ದರು. ಅದರ ಕಟ್ಟಡಗಳತ್ತ ಅವರ ಗಮನ ಸೆಳೆಯಲು ಶಿಷ್ಯರು ಅವರ ಬಳಿಗೆ ಬಂದರು.</verse>
				<verse number="2">ಆಗ ಯೇಸು, “ಇವುಗಳನ್ನೆಲ್ಲಾ ನೀವು ನೋಡುತ್ತಾ ಇದ್ದೀರಲ್ಲವೆ? ನಾನು ನಿಮಗೆ ಹೇಳುತ್ತೇನೆ ಕೇಳಿ: ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದು; ಎಲ್ಲವನ್ನೂ ಕೆಡವಿಹಾಕುವರು,” ಎಂದರು.</verse>
				<verse number="3">ಬಳಿಕ ಯೇಸುಸ್ವಾಮಿ ಓಲಿವ್ ಗುಡ್ಡದ ಮೇಲೆ ಕುಳಿತರು. ಶಿಷ್ಯರು ಅವರ ಬಳಿಗೆ ಬಂದು, “ಇದೆಲ್ಲಾ ಸಂಭವಿಸುವುದು ಯಾವಾಗ? ನಿಮ್ಮ ಪುನರಾಗಮನದ ಹಾಗೂ ಕಾಲಾಂತ್ಯದ ಪೂರ್ವಸೂಚನೆ ಏನು? ನಮಗೆ ತಿಳಿಸಿ,” ಎಂದು ಪ್ರತ್ಯೇಕವಾಗಿ ಕೇಳಿಕೊಂಡರು.</verse>
				<verse number="4">ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಜಾಗರೂಕರಾಗಿರಿ.</verse>
				<verse number="5">ಅನೇಕರು ‘ನಾನೇ ಕ್ರಿಸ್ತ, ನಾನೇ ಕ್ರಿಸ್ತ,’ ಎನ್ನುತ್ತಾ ನನ್ನ ಹೆಸರನ್ನೇ ಹೇಳಿಕೊಂಡು ಬರುವರು. ಮಾತ್ರವಲ್ಲ, ಎಷ್ಟೋ ಜನರನ್ನು ತಪ್ಪುದಾರಿಗೆಳೆಯುವರು.</verse>
				<verse number="6">ಇದೂ ಅಲ್ಲದೆ, ನೀವು ರಣಕಹಳೆಗಳನ್ನೂ ಸಮರಗಳ ಸುದ್ದಿಯನ್ನೂ ಕೇಳುವಿರಿ. ಆಗ ಕಳವಳಪಡದಂತೆ ಎಚ್ಚರಿಕೆಯಿಂದಿರಿ. ಇವೆಲ್ಲವು ಸಂಭವಿಸಲೇಬೇಕು. ಆದರೆ ಇದಿನ್ನೂ ಕಾಲಾಂತ್ಯವಲ್ಲ.</verse>
				<verse number="7">ಜನಾಂಗಕ್ಕೆ ವಿರುದ್ಧ ಜನಾಂಗವೂ ರಾಷ್ಟ್ರಕ್ಕೆ ವಿರುದ್ಧ ರಾಷ್ಟ್ರವೂ ಯುದ್ಧಕ್ಕಿಳಿಯುವುವು. ಅಲ್ಲಲ್ಲಿ ಕ್ಷಾಮಡಾಮರಗಳೂ ಭೂಕಂಪಗಳೂ ಸಂಭವಿಸುವುವು.</verse>
				<verse number="8">ಇವೆಲ್ಲವೂ ಪ್ರಸವ ವೇದನೆಯ ಪ್ರಾರಂಭ ಮಾತ್ರ.</verse>
				<verse number="9">“ಬಳಿಕ ಜನರು ನಿಮ್ಮನ್ನು ಕಷ್ಟಸಂಕಟಗಳಿಗೆ ಗುರಿಮಾಡಿ ಕೊಲ್ಲುವರು. ನೀವು ನನ್ನವರು, ಆದುದರಿಂದಲೇ ಜನಾಂಗಗಳೆಲ್ಲ ನಿಮ್ಮನ್ನು ದ್ವೇಷಿಸುವುವು.</verse>
				<verse number="10">ಆ ದಿನಗಳಲ್ಲಿ ಬಹುಮಂದಿ ವಿಶ್ವಾಸಭ್ರಷ್ಟರಾಗುವರು, ಒಬ್ಬರಿಗೊಬ್ಬರು ದ್ರೋಹ ಬಗೆಯುವರು. ಒಬ್ಬರನ್ನೊಬ್ಬರು ದ್ವೇಷಿಸುವರು.</verse>
				<verse number="11">ಅನೇಕ ಸುಳ್ಳುಪ್ರವಾದಿಗಳು ತಲೆಯೆತ್ತಿಕೊಂಡು ಎಷ್ಟೋಮಂದಿಯನ್ನು ವಂಚಿಸುವರು.</verse>
				<verse number="12">ಭ್ರಷ್ಟಾಚಾರವು ಬೆಳೆದು ಬಹುಜನರ ಪ್ರೀತಿ ಉಡುಗಿಹೋಗುವುದು.</verse>
				<verse number="13">ಆದರೆ ಕೊನೆಯವರೆಗೂ ಸ್ಥಿರವಾಗಿರುವವರು ಜೀವೋದ್ಧಾರವನ್ನು ಹೊಂದುವರು.</verse>
				<verse number="14">ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸರ್ವಜನಾಂಗಗಳಿಗೂ ಸಾಕ್ಷಿಯಾಗಿ ಜಗತ್ತಿನಲ್ಲೆಲ್ಲಾ ಪ್ರಬೋಧಿಸಲಾಗುವುದು. ಅಂತ್ಯವು ಬರುವುದು ಅನಂತರವೇ.</verse>
				<verse number="15">“ಪ್ರವಾದಿ ದಾನಿಯೇಲನು ಸೂಚಿಸಿರುವ ‘ವಿನಾಶಕರ ವಿಕಟ ಮೂರ್ತಿ’ ಪವಿತ್ರಸ್ಥಾನದಲ್ಲಿ ನಿಂತಿರುವುದನ್ನು ನೀವು ಕಾಣುವಿರಿ.</verse>
				<verse number="16">(ಇದನ್ನು ಓದುವವನು ಅರ್ಥಮಾಡಿಕೊಳ್ಳಲಿ). ಆಗ ಜುದೇಯದಲ್ಲಿರುವ ಜನರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ.</verse>
				<verse number="17">ಮಾಳಿಗೆಯ ಮೇಲಿರುವವನು ಇಳಿದು ಮನೆಯಿಂದ ಏನನ್ನೂ ತೆಗೆದುಕೊಳ್ಳದೆ ಓಡಿಹೋಗಲಿ.</verse>
				<verse number="18">ಹೊಲಗದ್ದೆಯಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳಲು ಹಿಂದಿರುಗದಿರಲಿ.</verse>
				<verse number="19">ಅಯ್ಯೋ, ಆ ದಿನಗಳಲ್ಲಿ ಗರ್ಭಿಣಿಯರ ಹಾಗೂ ಹಾಲೂಡಿಸುವ ತಾಯಂದಿರ ಗೋಳೇನು!</verse>
				<verse number="20">ಈ ನಿಮ್ಮ ಪಲಾಯನ ಚಳಿಗಾಲದಲ್ಲಾಗಲಿ, ಸಬ್ಬತ್ ದಿನದಲ್ಲಾಗಲಿ ಸಂಭವಿಸದಂತೆ ಪ್ರಾರ್ಥನೆಮಾಡಿರಿ.</verse>
				<verse number="21">ಏಕೆಂದರೆ ಆಗ ಬರಲಿರುವ ಸಂಕಷ್ಟಗಳು ಸೃಷ್ಟಿಯ ಆದಿಯಿಂದ ಇಂದಿನವರೆಗೂ ಇರಲಿಲ್ಲ; ಇನ್ನು ಮುಂದಕ್ಕೂ ಇರುವುದಿಲ್ಲ.</verse>
				<verse number="22">ಆ ದಿನಗಳ ಅವಧಿಯನ್ನು ಕಡಿಮೆಮಾಡದೆ ಇದ್ದಲ್ಲಿ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ದೇವರು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳನ್ನು ಕಡಿಮೆಮಾಡಲಾಗುವುದು.</verse>
				<verse number="23">“ಆಗ ಯಾರಾದರೂ ನಿಮಗೆ, ‘ಇಗೋ, ಕ್ರಿಸ್ತ ಇಲ್ಲಿದ್ದಾನೆ, ಅಗೋ, ಅಲ್ಲಿದ್ದಾನೆ,’ ಎಂದು ಹೇಳಿದರೆ ನಂಬಬೇಡಿ.</verse>
				<verse number="24">ಏಕೆಂದರೆ ಕಪಟ ಉದ್ಧಾರಕರೂ ವಂಚಕ ಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವಂತಹ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಮಾಡಿತೋರಿಸುವರು.</verse>
				<verse number="25">ಎಚ್ಚರಿಕೆ! ನಾನು ನಿಮಗೆ ಮುಂಚಿತವಾಗಿಯೇ ಇದನ್ನು ತಿಳಿಸುತ್ತಾ ಇದ್ದೇನೆ.</verse>
				<verse number="26">ಆದ್ದರಿಂದ ಯಾರಾದರು, ‘ಅಗೋ ಕ್ರಿಸ್ತ ಅಡವಿಯಲ್ಲಿದ್ದಾನೆ,’ ಎಂದರೆ ಅಲ್ಲಿಗೆ ಹೋಗಬೇಡಿ. ‘ಇಗೋ, ಇಲ್ಲೇ ಒಳಗೆ ಅವಿತುಕೊಂಡಿದ್ದಾನೆ,’ ಎಂದರೂ ಅದನ್ನು ನಂಬಬೇಡಿ.</verse>
				<verse number="27">ಏಕೆಂದರೆ ಪೂರ್ವದಿಂದ ಮಿನುಗಿ ಪಶ್ಚಿಮದವರೆಗೂ ಹೊಳೆಯುವ ಮಿಂಚಿನಂತೆ ಇರುವುದು ನರಪುತ್ರನ ಆಗಮನ.</verse>
				<verse number="28">ಹೆಣವಿದ್ದೆಡೆ ರಣಹದ್ದುಗಳು ಬಂದು ಸೇರುತ್ತವೆ.</verse>
				<verse number="29">“ಆ ದಿನಗಳ ಸಂಕಷ್ಟಗಳು ಮುಗಿದ ಕೂಡಲೇ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಕಳಚಿ ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.</verse>
				<verse number="30">ಆಗ ನರಪುತ್ರನ ಚಿಹ್ನೆ ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಪೃಥ್ವಿಯ ಪ್ರಜೆಗಳೆಲ್ಲಾ ಅತ್ತು ಪ್ರಲಾಪಿಸುವರು. ನರಪುತ್ರನು ಶಕ್ತಿಸಾಮರ್ಥ್ಯದಿಂದಲೂ ಮಹಾಮಹಿಮೆಯಿಂದಲೂ ಮೇಘಾರೂಢನಾಗಿ ಆಗಮಿಸುವುದನ್ನು ಅವರು ಕಾಣುವರು.</verse>
				<verse number="31">ತುತೂರಿಯ ಘೋಷಣೆಯೊಂದಿಗೆ ಆತನು ತನ್ನ ದೂತರನ್ನು ನಾಲ್ಕು ದಿಕ್ಕುಗಳಿಗೂ ಕಳುಹಿಸುವನು. ಅವರು ಹೋಗಿ ಆತನಿಂದ ಆಯ್ಕೆಯಾದ ಜನರನ್ನು ವಿಶ್ವದ ಅಷ್ಟದಿಕ್ಕುಗಳಿಂದ ಒಟ್ಟುಗೂಡಿಸುವರು.</verse>
				<verse number="32">“ಅಂಜೂರದ ಮರದಿಂದ ಒಂದು ಪಾಠ ಕಲಿತುಕೊಳ್ಳಿ. ಅದರ ಎಳೆ ರೆಂಬೆಗಳಲ್ಲಿ ಎಲೆಗಳು ಚಿಗುರುವಾಗ ವಸಂತಕಾಲ ಸಮೀಪಿಸಿತು ಎಂದು ತಿಳಿದುಕೊಳ್ಳುತ್ತೀರಿ.</verse>
				<verse number="33">ಅಂತೆಯೇ ಇದೆಲ್ಲವನ್ನು ನೋಡುವಾಗ ನರಪುತ್ರನು ಸಮೀಪಿಸಿಬಿಟ್ಟಿದ್ದಾನೆ, ಹೊಸ್ತಿಲಲ್ಲೇ ಇದ್ದಾನೆಂದು ತಿಳಿದುಕೊಳ್ಳಿ.</verse>
				<verse number="34">ಇದೆಲ್ಲವೂ ಸಂಭವಿಸುವವರೆಗೆ ಈ ಪೀಳಿಗೆ ಗತಿಸಿಹೋಗದೆಂದು ನಿಮಗೆ ಒತ್ತಿ ಹೇಳುತ್ತೇನೆ.</verse>
				<verse number="35">ಭೂಮ್ಯಾಕಾಶಗಳು ಗತಿಸಿಹೋಗುವುವು; ಆದರೆ ನನ್ನ ಮಾತುಗಳು ಶಾಶ್ವತವಾಗಿ ನಿಲ್ಲುವುವು.</verse>
				<verse number="36">“ಆ ದಿನವಾಗಲಿ, ಆ ಗಳಿಗೆಯಾಗಲಿ ಯಾವಾಗ ಬರುವುದೆಂದು ದೇವರೇ ಹೊರತು ಮತ್ತಾರೂ ಅರಿಯರು. ಸ್ವರ್ಗದ ದೂತರೇ ಆಗಲಿ, ಪುತ್ರನೇ ಆಗಲಿ ಅದನ್ನು ಅರಿಯರು.</verse>
				<verse number="37">ನೋವನ ಕಾಲದಲ್ಲಿ ಆದಂತೆಯೇ ನರಪುತ್ರನು ಬರುವಾಗಲೂ ಆಗುವುದು.</verse>
				<verse number="38">ಜಲಪ್ರಳಯಕ್ಕೆ ಹಿಂದಿನ ದಿನಗಳಲ್ಲಿ ನೋವನು ನಾವೆಯನ್ನು ಹತ್ತುವ ದಿನದವರೆಗೆ ಜನರು ತಿನ್ನುತ್ತಲೇ ಇದ್ದರು; ಕುಡಿಯುತ್ತಲೇ ಇದ್ದರು; ಮದುವೆ ಮಾಡಿಕೊಳ್ಳುವುದರಲ್ಲೂ ಮಾಡಿಕೊಡುವುದರಲ್ಲೂ ನಿರತರಾಗಿದ್ದರು.</verse>
				<verse number="39">ಜಲಪ್ರಳಯ ಬಂದು ಅವರನ್ನು ಕೊಚ್ಚಿಕೊಂಡು ಹೋಗುವ ತನಕ ಅದರ ಅರಿವೇ ಅವರಿಗಿರಲಿಲ್ಲ. ನರಪುತ್ರನು ಆಗಮಿಸುವಾಗಲೂ ಹಾಗೆಯೇ ನಡೆಯುವುದು.</verse>
				<verse number="40">ಆಗ ಹೊಲದಲ್ಲಿದ್ದ ಇಬ್ಬರಲ್ಲಿ ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು. ಇನ್ನೊಬ್ಬನನ್ನು ಬಿಡಲಾಗುವುದು.</verse>
				<verse number="41">ಒಂದೇ ಕಲ್ಲಿನಲ್ಲಿ ಬೀಸುತ್ತ ಇರುವ ಇಬ್ಬರು ಮಹಿಳೆಯರಲ್ಲಿ ಒಬ್ಬಳನ್ನು ತೆಗೆದುಕೊಂಡು ಹೋಗಲಾಗುವುದು, ಇನ್ನೊಬ್ಬಳನ್ನು ಬಿಡಲಾಗುವುದು.</verse>
				<verse number="42">ನಿಮ್ಮ ಪ್ರಭು ಯಾವ ದಿನ ಬರುತ್ತಾನೆಂದು ನಿಮಗೆ ತಿಳಿಯದು, ಆದ್ದರಿಂದ ಎಚ್ಚರವಾಗಿರಿ.</verse>
				<verse number="43">ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ಎಚ್ಚರವಾಗಿದ್ದು ತನ್ನ ಮನೆಗೆ ಕನ್ನಹಾಕಲು ಬಿಡನು, ಅಲ್ಲವೆ?</verse>
				<verse number="44">ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು.</verse>
				<verse number="45">“ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿ ಆಳುಗಳಿಗೆ ದವಸಧಾನ್ಯಗಳನ್ನು ಅಳೆದುಕೊಟ್ಟು ತನ್ನ ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಕಗೊಂಡವನು.</verse>
				<verse number="46">ಯಜಮಾನನು ಮನೆಗೆ ಹಿಂದಿರುಗಿಬಂದಾಗ ಆ ಮೇಸ್ತ್ರಿ ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು.</verse>
				<verse number="47">ಅಂಥವನನ್ನು ಯಜಮಾನನು ತನ್ನ ಎಲ್ಲಾ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುತ್ತಾನೆಂಬುದು ನಿಶ್ಚಯ.</verse>
				<verse number="48">ಆದರೆ ಆ ಮೇಸ್ತ್ರಿ ದುಷ್ಟನಾಗಿದ್ದು ‘ನನ್ನ ಯಜಮಾನ ತಡಮಾಡುವನು’ ಎಂದು ನೆನಸಿಕೊಂಡು,</verse>
				<verse number="49">ತನ್ನ ಜೊತೆಯ ಸೇವಕರನ್ನು ಹೊಡೆಯತೊಡಗಿದರೆ, ಕುಡುಕರ ಸಂಗಡ ತಿಂದುಕುಡಿಯಲಾರಂಭಿಸಿದರೆ,</verse>
				<verse number="50">ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ, ಯಜಮಾನನು ಬರುವನು.</verse>
				<verse number="51">ಅವನನ್ನು ಚಿತ್ರಹಿಂಸೆಗೂ ಕಪಟಿಗಳ ದುರ್ಗತಿಗೂ ಗುರಿಮಾಡುವನು. ಅಲ್ಲಿರುವವರೊಡನೆ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು.</verse>
			</chapter>
			<chapter number="25">
				<verse number="1">“ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಹೇಗಿರುವುದು ಎನ್ನುವುದಕ್ಕೆ ಈ ಸಾಮತಿಯನ್ನು ಕೊಡಬಹುದು: ಹತ್ತುಮಂದಿ ಕನ್ಯೆಯರು ದೀಪಾರತಿ ಹಿಡಿದು ಮದುವಣಿಗನನ್ನು ಎದುರುಗೊಳ್ಳಲು ಹೋದರು.</verse>
				<verse number="2">ಅವರಲ್ಲಿ ಐವರು ವಿವೇಕಿಗಳು, ಐವರು ಅವಿವೇಕಿಗಳು.</verse>
				<verse number="3">ಅವಿವೇಕಿಗಳು ದೀಪಗಳನ್ನು ತೆಗೆದುಕೊಂಡರೇ ಹೊರತು ಜೊತೆಗೆ ಎಣ್ಣೆಯನ್ನು ತೆಗೆದುಕೊಳ್ಳಲಿಲ್ಲ.</verse>
				<verse number="4">ವಿವೇಕಿಗಳಾದರೋ ದೀಪಗಳ ಜೊತೆಗೆ ಬುಡ್ಡಿಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.</verse>
				<verse number="5">ಮದುವಣಿಗ ಬರುವುದು ತಡವಾಯಿತು. ಅವರೆಲ್ಲರೂ ತೂಕಡಿಸುತ್ತಾ ಹಾಗೇ ನಿದ್ರೆಹೋದರು.</verse>
				<verse number="6">“ನಡುರಾತ್ರಿಯ ವೇಳೆ. ‘ಇಗೋ, ಮದುವಣಿಗ ಬರುತ್ತಿದ್ದಾನೆ; ಬನ್ನಿ, ಆತನನ್ನು ಎದುರುಗೊಳ್ಳಿ,’ ಎಂಬ ಕೂಗು ಕೇಳಿಸಿತು. ಕನ್ಯೆಯರೆಲ್ಲರೂ ಎದ್ದರು.</verse>
				<verse number="7">ತಮ್ಮತಮ್ಮ ದೀಪದ ಬತ್ತಿಯನ್ನು ಸರಿಮಾಡಿದರು.</verse>
				<verse number="8">ಅವಿವೇಕಿಗಳು, ‘ನಮ್ಮ ದೀಪಗಳು ಆರಿಹೋಗುತ್ತಾ ಇವೆ; ನಿಮ್ಮ ಎಣ್ಣೆಯಲ್ಲಿ ನಮಗೂ ಕೊಂಚ ಕೊಡಿ,’ ಎಂದು ವಿವೇಕಿಗಳನ್ನು ಕೇಳಿಕೊಂಡರು.</verse>
				<verse number="9">ಅದಕ್ಕೆ ಅವರು, ‘ನಿಮಗೆ ಕೊಟ್ಟರೆ ನಮಗೂ ನಿಮಗೂ ಸಾಲದೆಹೋದೀತು, ನೀವು ಅಂಗಡಿಗೆ ಹೋಗಿ ಕೊಂಡುಕೊಂಡರೆ ಒಳ್ಳೆಯದು,’ ಎಂದರು.</verse>
				<verse number="10">ಅಂತೆಯೇ ಅವರು ಎಣ್ಣೆಯನ್ನು ಕೊಂಡುಕೊಳ್ಳಲು ಹೋದಾಗ ಮದುವಣಿಗನು ಬಂದೇಬಿಟ್ಟನು. ಸಿದ್ಧರಾಗಿದ್ದವರು ಅವನ ಸಂಗಡ ವಿವಾಹ ಮಹೋತ್ಸವಕ್ಕೆ ಹೋದರು. ಕಲ್ಯಾಣಮಂಟಪದ ಬಾಗಿಲುಗಳನ್ನು ಮುಚ್ಚಲಾಯಿತು.</verse>
				<verse number="11">ಉಳಿದ ಕನ್ಯೆಯರು ಅನಂತರ ಬಂದರು. ‘ಸ್ವಾಮೀ, ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ಕೂಗಿಕೊಂಡರು.</verse>
				<verse number="12">ಅದಕ್ಕೆ ಉತ್ತರವಾಗಿ ಆ ಮದುವಣಿಗ, ‘ಅದಾಗದು, ನೀವು ಯಾರೋ ನನಗೆ ಗೊತ್ತಿಲ್ಲ,’ ಎಂದುಬಿಟ್ಟ.</verse>
				<verse number="13">ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು.</verse>
				<verse number="14">“ಅದೂ ಅಲ್ಲದೆ ಆ ದಿನಗಳಲ್ಲಿ ಸ್ವರ್ಗಸಾಮ್ರಾಜ್ಯ ಇಂತಿರುವುದು: ಒಬ್ಬಾತ ಪ್ರವಾಸ ಹೊರಡಲಿದ್ದ. ತನ್ನ ಸೇವಕರನ್ನು ಕರೆದು ಅವರ ವಶಕ್ಕೆ ತನ್ನ ಆಸ್ತಿಯನ್ನು ಒಪ್ಪಿಸಿದ.</verse>
				<verse number="15">ಒಬ್ಬನಿಗೆ ಐದು ತಲೆಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು - ಹೀಗೆ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ವಹಿಸಿಕೊಟ್ಟು ಹೊರಟುಹೋದ.</verse>
				<verse number="16">ಐದು ತಲೆಂತು ಪಡೆದ ಸೇವಕ ಒಡನೇ ಹೋಗಿ ಆ ಮೊತ್ತದಿಂದ ವ್ಯಾಪಾರಮಾಡಿ ಇನ್ನೂ ಐದನ್ನು ಸಂಪಾದಿಸಿದ.</verse>
				<verse number="17">ಎರಡು ಪಡೆದವನೂ ಹಾಗೆಯೇ ಮಾಡಿ ಇನ್ನೂ ಎರಡನ್ನು ಸಂಪಾದಿಸಿದ.</verse>
				<verse number="18">ಒಂದು ತಲೆಂತು ಪಡೆದವನು ಮಾತ್ರ, ಅದನ್ನು ತೆಗೆದುಕೊಂಡು ಹೋಗಿ ಭೂಮಿ ಅಗೆದು, ಅದರಲ್ಲಿ ತನ್ನ ಧಣಿಯ ಆ ಹಣವನ್ನು ಹೂತಿಟ್ಟ.</verse>
				<verse number="19">ಬಹಳ ಕಾಲವಾದ ಬಳಿಕ ಆ ಧಣಿ ಹಿಂದಿರುಗಿಬಂದ.</verse>
				<verse number="20">ಸೇವಕರಿಂದ ಲೆಕ್ಕಾಚಾರ ಕೇಳಿದ. ಐದು ತಲೆಂತು ಪಡೆದವನು ಇನ್ನೂ ಐದು ತಲೆಂತುಗಳನ್ನು ಮುಂದೆ ತಂದು, ‘ಒಡೆಯಾ, ನೀವು ನನ್ನ ವಶಕ್ಕೆ ಐದು ತಲೆಂತು ಒಪ್ಪಿಸಿದಿರಿ. ಇಗೋ ನೋಡಿ, ಮತ್ತೆ ಐದು ತಲೆಂತು ಸಂಪಾದಿಸಿದ್ದೇನೆ,’ ಎಂದ.</verse>
				<verse number="21">ಅದಕ್ಕೆ ಆ ಧಣಿ, “ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ, ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು,’ ಎಂದ.</verse>
				<verse number="22">ಎರಡು ತಲೆಂತು ಪಡೆದಿದ್ದವನೂ ಮುಂದೆ ಬಂದು, ‘ಒಡೆಯಾ, ನೀವು ನನ್ನ ವಶಕ್ಕೆ ಎರಡು ತಲೆಂತುಗಳನ್ನು ಒಪ್ಪಿಸಿದಿರಿ. ಇಗೋ ನೋಡಿ, ಇನ್ನೂ ಎರಡು ತಲೆಂತುಗಳನ್ನು ಸಂಪಾದಿಸಿದ್ದೇನೆ,’ ಎಂದ.</verse>
				<verse number="23">ಧಣಿ ಅವನಿಗೂ, ‘ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ. ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೂ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ನೀನೂ ಭಾಗಿಯಾಗು,’ ಎಂದ.</verse>
				<verse number="24">ತರುವಾಯ ಒಂದು ತಲೆಂತು ಪಡೆದವನೂ ಮುಂದೆ ಬಂದ; ‘ಒಡೆಯಾ, ನಿಮ್ಮ ಮನಸ್ಸು ಕಠಿಣ ಎಂಬುದನ್ನು ನಾನು ಬಲ್ಲೆ. ನೀವು ಬಿತ್ತದ ಎಡೆಯಲ್ಲಿ ಕೊಯ್ಲುಮಾಡುವವರು; ನೀವು ತೂರದ ಎಡೆಯಲ್ಲಿ ರಾಶಿಮಾಡುವವರು;</verse>
				<verse number="25">ಆದ್ದರಿಂದ ನಾನು ಭಯಪಟ್ಟೆ; ಹೋಗಿ ನಿಮ್ಮ ತಲೆಂತನ್ನು ಭೂಮಿಯಲ್ಲಿ ಹೂತಿಟ್ಟೆ. ಇಗೋ, ಸ್ವೀಕರಿಸಿ, ನಿಮ್ಮದು ನಿಮಗೆ ಸಂದಿದೆ,’ ಎಂದ.</verse>
				<verse number="26">“ಆಗ ಧಣಿ ಅವನಿಗೆ, ‘ಎಲವೋ, ಮೈಗಳ್ಳನಾದ ದುಷ್ಟ ಸೇವಕ, ನಾನು ಬಿತ್ತದ ಎಡೆಯಲ್ಲಿ ಕೊಯ್ಲುಮಾಡುವವನು; ನಾನು ತೂರದ ಎಡೆಯಲ್ಲಿ ರಾಶಿಮಾಡುವವನು ಎಂದು ನಿನಗೆ ಗೊತ್ತಿತ್ತಲ್ಲವೆ?</verse>
				<verse number="27">ಹಾಗಾದರೆ ನನ್ನ ಹಣವನ್ನು ನೀನು ಬಡ್ಡಿ ಅಂಗಡಿಯಲ್ಲಿ ಹಾಕಿಡಬೇಕಿತ್ತು; ನಾನು ಬಂದು ಬಡ್ಡಿಸಮೇತ ನನ್ನ ಅಸಲನ್ನು ಪಡೆಯುತ್ತಿದ್ದೆ,’ ಎಂದ.</verse>
				<verse number="28">ಅನಂತರ ಪರಿಚಾರಕರಿಗೆ, ‘ಇವನಿಂದ ಆ ತಲೆಂತು ನಾಣ್ಯವನ್ನು ಕಿತ್ತು ಹತ್ತು ತಲೆಂತು ಇರುವವನಿಗೆ ಕೊಡಿ.</verse>
				<verse number="29">ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ.</verse>
				<verse number="30">ಅಪ್ರಯೋಜಕನಾದ ಈ ಸೇವಕನನ್ನು ಹೊರಗಿನ ಕಗ್ಗತ್ತಲೆಗೆ ದಬ್ಬಿರಿ. ಅಲ್ಲಿ ಕಟಕಟನೆ ಹಲ್ಲುಕಡಿದುಕೊಂಡು ಗೋಳಾಡಬೇಕಾಗುವುದು,’ ಎಂದು ಹೇಳಿದ.</verse>
				<verse number="31">“ನರಪುತ್ರನು ತನ್ನ ಮಹಿಮೆಯಲ್ಲಿ ಸಮಸ್ತ ದೇವದೂತರ ಸಮೇತ ಬರುವಾಗ ತನ್ನ ಮಹಿಮಾನ್ವಿತ ಸಿಂಹಾಸನದಲ್ಲಿ ಆಸೀನನಾಗಿರುವನು.</verse>
				<verse number="32">ಸರ್ವಜನಾಂಗಗಳನ್ನು ಆತನ ಸಮ್ಮುಖದಲ್ಲಿ ಒಟ್ಟುಗೂಡಿಸಲಾಗುವುದು. ಕುರುಬನು ಕುರಿಗಳನ್ನು ಆಡುಗಳಿಂದ ಬೇರ್ಪಡಿಸುವಂತೆ ಆತನು ಅವರನ್ನು ಬೇರ್ಪಡಿಸುವನು.</verse>
				<verse number="33">ಕುರಿಗಳನ್ನು ತನ್ನ ಬಲಗಡೆಯಲ್ಲೂ ಆಡುಗಳನ್ನು ತನ್ನ ಎಡಗಡೆಯಲ್ಲೂ ಇರಿಸುವನು.</verse>
				<verse number="34">ಆಗ ಅರಸನು ತನ್ನ ಬಲಗಡೆಯಿರುವ ಜನರಿಗೆ, ‘ನನ್ನ ಪಿತನಿಂದ ಧನ್ಯರೆನಿಸಿಕೊಂಡವರೇ, ಬನ್ನಿ. ಲೋಕಾದಿಯಿಂದ ನಿಮಗಾಗಿ ಸಿದ್ಧಮಾಡಿದ ಸಾಮ್ರಾಜ್ಯವನ್ನು ಸ್ವಾಸ್ತ್ಯವಾಗಿ ಪಡೆಯಿರಿ.</verse>
				<verse number="35">ಏಕೆಂದರೆ, ನಾನು ಹಸಿದಿದ್ದೆ, ನನಗೆ ಆಹಾರ ಕೊಟ್ಟಿರಿ; ಬಾಯಾರಿದ್ದೆ, ಕುಡಿಯಲು ಕೊಟ್ಟಿರಿ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ಕೊಟ್ಟಿರಿ.</verse>
				<verse number="36">ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಟ್ಟಿರಿ. ರೋಗದಿಂದಿದ್ದೆ, ನನ್ನನ್ನು ಆರೈಕೆಮಾಡಿದಿರಿ. ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಿದಿರಿ,’ ಎಂದು ಹೇಳುವನು.</verse>
				<verse number="37">ಅದಕ್ಕೆ ಆ ಸಜ್ಜನರು, ‘ಸ್ವಾಮೀ, ತಾವು ಯಾವಾಗ ಹಸಿದಿದ್ದನ್ನು ಕಂಡು ನಾವು ಆಹಾರ ಕೊಟ್ಟೆವು? ಬಾಯಾರಿದ್ದನ್ನು ಕಂಡು ಕುಡಿಯಲು ಕೊಟ್ಟೆವು?</verse>
				<verse number="38">ಯಾವಾಗ ತಾವು ಅಪರಿಚಿತರಾಗಿದ್ದನ್ನು ಕಂಡು ನಾವು ಆಶ್ರಯಕೊಟ್ಟೆವು? ಬಟ್ಟೆಬರೆಯಿಲ್ಲದ್ದನ್ನು ಕಂಡು ಉಡಲು ಕೊಟ್ಟೆವು?</verse>
				<verse number="39">ತಾವು ರೋಗಿಯಾಗಿರುವುದನ್ನು ಅಥವಾ ಬಂಧಿಯಾಗಿರುವುದನ್ನು ಕಂಡು ನಾವು ಸಂಧಿಸಲು ಬಂದೆವು?’ ಎಂದು ಕೇಳುವರು.</verse>
				<verse number="40">ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.</verse>
				<verse number="41">“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.</verse>
				<verse number="42">ಏಕೆಂದರೆ ನಾನು ಹಸಿದಿದ್ದೆ, ನೀವು ನನಗೆ ಆಹಾರಕೊಡಲಿಲ್ಲ; ಬಾಯಾರಿದ್ದೆ, ಕುಡಿಯಲು ಕೊಡಲಿಲ್ಲ; ಅಪರಿಚಿತನಾಗಿದ್ದೆ, ನನಗೆ ಆಶ್ರಯ ನೀಡಲಿಲ್ಲ;</verse>
				<verse number="43">ಬಟ್ಟೆಬರೆಯಿಲ್ಲದೆ ಇದ್ದೆ, ನನಗೆ ಉಡಲು ಕೊಡಲಿಲ್ಲ; ರೋಗಿಯಾಗಿದ್ದೆ, ಬಂಧಿಯಾಗಿದ್ದೆ, ನೀವು ನನ್ನನ್ನು ಸಂಧಿಸಲಿಲ್ಲ,’ ಎಂದು ಹೇಳುವನು.</verse>
				<verse number="44">ಅದಕ್ಕೆ ಅವರು ಕೂಡ, ‘ಸ್ವಾಮೀ, ತಾವು ಯಾವಾಗ ಹಸಿದಿದ್ದಿರಿ, ಬಾಯಾರಿದ್ದಿರಿ, ಅಪರಿಚಿತರಾಗಿದ್ದಿರಿ, ಯಾವಾಗ ಬಟ್ಟೆಬರೆ ಇಲ್ಲದೆ ಇದ್ದಿರಿ, ರೋಗಿಯಾಗಿದ್ದಿರಿ, ಮತ್ತು ಬಂಧಿಯಾಗಿ ಇದ್ದಿರಿ ಮತ್ತು ನಾವು ಅವನ್ನು ಕಂಡು ನಿಮಗೆ ಉಪಚಾರಮಾಡದೆಹೋದೆವು? ಎಂದು ಪ್ರಶ್ನಿಸುವರು.</verse>
				<verse number="45">ಅದಕ್ಕೆ ಪ್ರತ್ಯುತ್ತರವಾಗಿ ಅರಸನು, ‘ಇವರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಠನಾಗಿರಲಿ, ನೀವು ಹಾಗೆ ಮಾಡದೆಹೋದಾಗ ಅದನ್ನು ನನಗೇ ಮಾಡಲಿಲ್ಲ,’ ಎನ್ನುವರು.</verse>
				<verse number="46">“ಹೀಗೆ ಈ ದುರ್ಜನರು ನಿತ್ಯಶಿಕ್ಷೆಗೂ, ಆ ಸಜ್ಜನರು ನಿತ್ಯಜೀವಕ್ಕೂ ಹೋಗುವರು,” ಎಂದು ಹೇಳಿದರು ಸ್ವಾಮಿ.</verse>
			</chapter>
			<chapter number="26">
				<verse number="1">ಇದನ್ನೆಲ್ಲಾ ಬೋಧಿಸಿ ಆದಮೇಲೆ ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ,</verse>
				<verse number="2">“ನಿಮಗೆ ಗೊತ್ತಿರುವ ಹಾಗೆ ಪಾಸ್ಕಹಬ್ಬಕ್ಕೆ ಇನ್ನು ಎರಡು ದಿನಗಳಿವೆ. ಆಗ ನರಪುತ್ರನನ್ನು ಶಿಲುಬೆಗೇರಿಸಲು ಹಿಡಿದೊಪ್ಪಿಸುವರು,” ಎಂದರು.</verse>
				<verse number="3">ಇತ್ತ ಮುಖ್ಯಯಾಜಕರು ಮತ್ತು ಪ್ರಜಾಪ್ರಮುಖರು ‘ಕಾಯಫ’ ಎಂಬ ಪ್ರಧಾನ ಯಾಜಕನ ಭವನದಲ್ಲಿ ಒಟ್ಟುಗೂಡಿದರು.</verse>
				<verse number="4">ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲಿಸುವುದಕ್ಕೆ ಸಮಾಲೋಚಿಸಿಕೊಂಡರು.</verse>
				<verse number="5">ಆದರೆ,, ‘ಹಬ್ಬದ ಸಂದರ್ಭದಲ್ಲಿ ನಾವು ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ಜನರು ದಂಗೆಯೆದ್ದಾರು,’ ಎಂದೂ ಮಾತಾಡಿಕೊಂಡರು.</verse>
				<verse number="6">ಅಂದು ಯೇಸು ಬೆಥಾನಿಯದಲ್ಲಿ ಕುಷ್ಠರೋಗಿ ಸಿಮೋನನ ಮನೆಯಲ್ಲಿದ್ದರು.</verse>
				<verse number="7">ಆಗ ಮಹಿಳೆಯೊಬ್ಬಳು ಅಮೃತಶಿಲೆಯ ಭರಣಿಯ ತುಂಬ ಅತ್ಯಮೂಲ್ಯವಾದ ಸುಗಂಧತೈಲವನ್ನು ತೆಗೆದುಕೊಂಡು ಅಲ್ಲಿಗೆ ಬಂದಳು. ಊಟಕ್ಕೆ ಕುಳಿತಿದ್ದ ಯೇಸುವಿನ ತಲೆಯ ಮೇಲೆ ಆ ತೈಲವನ್ನು ಸುರಿದಳು.</verse>
				<verse number="8">ಇದನ್ನು ಕಂಡ ಶಿಷ್ಯರು ಸಿಟ್ಟಿಗೆದ್ದರು. “ಏಕೆ ಇಷ್ಟೊಂದು ವ್ಯರ್ಥ?</verse>
				<verse number="9">ಈ ತೈಲವನ್ನು ಅಧಿಕ ಬೆಲೆಗೆ ಮಾರಿ, ಬಂದ ಹಣವನ್ನು ಬಡವರಿಗೆ ಕೊಡಬಹುದಿತ್ತಲ್ಲಾ,” ಎಂದರು.</verse>
				<verse number="10">ಇದನ್ನು ಅರಿತುಕೊಂಡ ಯೇಸು ಶಿಷ್ಯರಿಗೆ, “ಈ ಮಹಿಳೆಗೇಕೆ ಕಿರುಕುಳ ಕೊಡುತ್ತೀರಿ? ಈಕೆ ನನಗೊಂದು ಸತ್ಕಾರ್ಯವನ್ನೇ ಮಾಡಿದ್ದಾಳೆ.</verse>
				<verse number="11">ಬಡಬಗ್ಗರು ನಿಮ್ಮ ಸಂಗಡ ಯಾವಾಗಲೂ ಇರುತ್ತಾರೆ. ಆದರೆ ನಾನು ನಿಮ್ಮ ಸಂಗಡ ಯಾವಾಗಲೂ ಇರುವುದಿಲ್ಲ.</verse>
				<verse number="12">ಈಕೆ ಈ ತೈಲವನ್ನು ನನ್ನ ದೇಹದ ಮೇಲೆ ಸುರಿದು ನನ್ನ ಶವಸಂಸ್ಕಾರಕ್ಕೆ ಸಿದ್ಧಮಾಡಿದ್ದಾಳೆ.</verse>
				<verse number="13">ಜಗತ್ತಿನಾದ್ಯಂತ, ಎಲ್ಲೆಲ್ಲಿ ಶುಭಸಂದೇಶ ಪ್ರಕಟವಾಗುವುದೋ ಅಲ್ಲೆಲ್ಲಾ ಈ ಸತ್ಕಾರ್ಯವನ್ನು ಈಕೆಯ ಸವಿನೆನಪಿಗಾಗಿ ಸಾರಲಾಗುವುದು. ಇದು ನಿಶ್ಚಯ,” ಎಂದರು.</verse>
				<verse number="14">ಇದಾದ ಮೇಲೆ, ಹನ್ನೆರಡು ಮಂದಿ ಶಿಷ್ಯರಲ್ಲಿ ಇಸ್ಕರಿಯೋತಿನ ಯೂದ ಎಂಬಾತ ಮುಖ್ಯಯಾಜಕರ ಬಳಿಗೆ ಹೋದನು.</verse>
				<verse number="15">“ನಿಮಗೆ ನಾನು ಯೇಸುವನ್ನು ಹಿಡಿದುಕೊಟ್ಟರೆ ನನಗೇನು ಕೊಡುವಿರಿ?” ಎಂದು ಅವರನ್ನು ವಿಚಾರಿಸಿದನು. ಅವರೋ, ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ನಿಗದಿಮಾಡಿಕೊಟ್ಟರು.</verse>
				<verse number="16">ಆ ಗಳಿಗೆಯಿಂದ ಯೇಸುವನ್ನು ಹಿಡಿದೊಪ್ಪಿಸಲು ಅವನು ಸಂದರ್ಭ ಕಾಯುತ್ತಾ ಇದ್ದನು.</verse>
				<verse number="17">ಅಂದು ಹುಳಿರಹಿತ ರೊಟ್ಟಿಯ ಹಬ್ಬದ ಮೊದಲನೆಯ ದಿನ. ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ತಮಗೆ ಪಾಸ್ಕ ಭೋಜನವನ್ನು ನಾವು ಎಲ್ಲಿ ಸಿದ್ಧಪಡಿಸಬೇಕೆನ್ನುತ್ತೀರಿ?” ಎಂದು ಕೇಳಿದರು.</verse>
				<verse number="18">ಅದಕ್ಕೆ ಅವರು, “ಪಟ್ಟಣದಲ್ಲಿ ನಾನು ಸೂಚಿಸುವಂಥವನ ಬಳಿಗೆ ಹೋಗಿರಿ. ‘ನನ್ನ ಕಾಲ ಸಮೀಪಿಸಿತು. ಪಾಸ್ಕವನ್ನು ನನ್ನ ಶಿಷ್ಯರ ಸಮೇತ ನಿನ್ನ ಮನೆಯಲ್ಲಿಯೇ ಆಚರಿಸಬೇಕೆಂದಿದ್ದೇನೆ’; ಇದನ್ನು ನಮ್ಮ ಗುರುವೇ ಹೇಳಿಕಳುಹಿಸಿದ್ದಾರೆ ಎಂದು ಅವನಿಗೆ ತಿಳಿಸಿರಿ,” ಎಂದರು.</verse>
				<verse number="19">ಯೇಸು ಸೂಚಿಸಿದಂತೆಯೇ ಶಿಷ್ಯರು ಹೋಗಿ ಪಾಸ್ಕಭೋಜನವನ್ನು ತಯಾರಿಸಿದರು.</verse>
				<verse number="20">ಸಂಜೆಯಾಯಿತು. ಯೇಸುಸ್ವಾಮಿ ಹನ್ನೆರಡುಮಂದಿ ಶಿಷ್ಯರ ಸಂಗಡ ಊಟಕ್ಕೆ ಕುಳಿತರು.</verse>
				<verse number="21">ಅವರೆಲ್ಲರೂ ಊಟಮಾಡುತ್ತಿದ್ದಾಗ ಯೇಸು, “ನಿಮ್ಮಲ್ಲೇ ಒಬ್ಬನು ನನಗೆ ದ್ರೋಹಬಗೆಯುತ್ತಾನೆ, ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ,” ಎಂದರು.</verse>
				<verse number="22">ಶಿಷ್ಯರು ಬಹಳ ಕಳವಳಗೊಂಡರು. ಒಬ್ಬರಾದ ಮೇಲೊಬ್ಬರು, “ಸ್ವಾಮೀ, ನಾನೋ? ನಾನೋ?” ಎಂದು ಕೇಳತೊಡಗಿದರು.</verse>
				<verse number="23">ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಊಟದ ಬಟ್ಟಲಲ್ಲಿ ನನ್ನೊಡನೆ ಕೈ ಅದ್ದಿ ಉಣ್ಣುವವನೇ ನನಗೆ ದ್ರೋಹ ಬಗೆಯುತ್ತಾನೆ.</verse>
				<verse number="24">ನರಪುತ್ರನೇನೋ ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತಾನೆ, ನಿಜ. ಆದರೆ ಅಯ್ಯೋ, ನರಪುತ್ರನಿಗೆ ದ್ರೋಹಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ! ಅವನು ಹುಟ್ಟದೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದರು.</verse>
				<verse number="25">ಗುರುದ್ರೋಹಿಯಾದ ಯೂದನು ಆಗ, “ಗುರುವೇ, ಅವನು ನಾನಲ್ಲ ತಾನೇ?” ಎಂದನು. ಅದಕ್ಕೆ ಯೇಸು, “ಅದು ನಿನ್ನ ಬಾಯಿಂದಲೇ ಬಂದಿದೆ,” ಎಂದರು.</verse>
				<verse number="26">ಅವರೆಲ್ಲರೂ ಊಟಮಾಡುತ್ತಿರುವಾಗ ಯೇಸುಸ್ವಾಮಿ ರೊಟ್ಟಿಯನ್ನು ತೆಗೆದುಕೊಂಡು ದೈವಸ್ತುತಿಮಾಡಿ, ಅದನ್ನು ಮುರಿದು, ಶಿಷ್ಯರಿಗೆ ಕೊಡುತ್ತಾ, “ಇದನ್ನು ತೆಗೆದುಕೊಂಡು ಭುಜಿಸಿರಿ, ಇದು ನನ್ನ ಶರೀರ,” ಎಂದರು.</verse>
				<verse number="27">ಬಳಿಕ ಪಾನಪಾತ್ರೆಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಅವರಿಗೆ ಕೊಡುತ್ತಾ ಇಂತೆಂದರು: “ಇದರಲ್ಲಿ ಇರುವುದನ್ನು ಎಲ್ಲರೂ ಪಾನಮಾಡಿ;</verse>
				<verse number="28">ಇದು ನನ್ನ ರಕ್ತ, ಸಮಸ್ತ ಜನರ ಪಾಪಕ್ಷಮೆಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ.</verse>
				<verse number="29">ನಾನು ನನ್ನ ಪಿತನ ಸಾಮ್ರಾಜ್ಯದಲ್ಲಿ ದ್ರಾಕ್ಷಾರಸ ನಿಮ್ಮ ಸಂಗಡ ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.</verse>
				<verse number="30">ಬಳಿಕ ಅವರೆಲ್ಲರು ಕೀರ್ತನೆ ಹಾಡಿ, ಓಲಿವ್ ಗುಡ್ಡಕ್ಕೆ ಹೊರಟರು.</verse>
				<verse number="31">ಆಗ ಯೇಸು ತಮ್ಮ ಶಿಷ್ಯರಿಗೆ, “ ‘ಕುರಿಗಾಹಿಯನ್ನು ಕೊಲ್ಲುವೆನು ಕುರಿಗಳು ಚದರುವುವು,’ ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಅದರಂತೆಯೇ ನೀವೆಲ್ಲರೂ ಇದೇ ರಾತ್ರಿ ನನ್ನಲ್ಲಿ ವಿಶ್ವಾಸ ಕಳೆದುಕೊಂಡು ಹಿಮ್ಮೆಟ್ಟುವಿರಿ.</verse>
				<verse number="32">ನಾನಾದರೋ ಪುನರುತ್ಥಾನಹೊಂದಿ ನಿಮಗಿಂತ ಮುಂದಾಗಿ ಗಲಿಲೇಯಕ್ಕೆ ಹೋಗುವೆನು,” ಎಂದರು.</verse>
				<verse number="33">ಇದನ್ನು ಕೇಳಿದ ಪೇತ್ರನು, “ಎಲ್ಲರು ತಮ್ಮಲ್ಲಿ ವಿಶ್ವಾಸಕಳೆದುಕೊಂಡು ಹಿಮ್ಮೆಟ್ಟಿದರೂ ನಾನು ಮಾತ್ರ ಎಂದಿಗೂ ಹಾಗೆ ಮಾಡುವುದಿಲ್ಲ,” ಎಂದು ಸಾರಿ ಹೇಳಿದನು.</verse>
				<verse number="34">ಅದಕ್ಕೆ ಯೇಸು, “ಇದೇ ರಾತ್ರಿ ಕೋಳಿ ಕೂಗುವ ಮೊದಲೇ ‘ಆತನನ್ನು ನಾನರಿಯೆ’ ಎಂದು ನೀನು ಮೂರು ಬಾರಿ ನನ್ನನ್ನು ನಿರಾಕರಿಸುವೆ; ಇದು ಖಂಡಿತ,” ಎಂದರು.</verse>
				<verse number="35">ಆದರೆ ಪೇತ್ರನು, “ನಾನು ತಮ್ಮೊಡನೆ ಸಾಯಬೇಕಾಗಿ ಬಂದರೂ ಸರಿಯೆ, ತಮ್ಮನ್ನು ಮಾತ್ರ ನಿರಾಕರಿಸೆನು,” ಎಂದು ನುಡಿದನು. ಅದರಂತೆಯೇ ಉಳಿದ ಶಿಷ್ಯರೂ ದನಿಗೂಡಿಸಿದರು.</verse>
				<verse number="36">ಅನಂತರ ಯೇಸುಸ್ವಾಮಿ ಅವರೊಡನೆ ಗೆತ್ಸೆಮನೆ ಎಂಬ ತೋಪಿಗೆ ಬಂದರು. ಅಲ್ಲಿ ಶಿಷ್ಯರಿಗೆ, “ನಾನು ಅತ್ತ ಹೋಗಿ ಪ್ರಾರ್ಥನೆಮಾಡಿ ಬರುವವರೆಗೂ ನೀವು ಇಲ್ಲೇ ಕುಳಿತಿರಿ,” ಎಂದರು.</verse>
				<verse number="37">ಬಳಿಕ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ತಮ್ಮೊಂದಿಗೆ ಕರೆದುಕೊಂಡು ಮುಂದಕ್ಕೆಹೋದರು. ಅಲ್ಲಿ ಸ್ವಾಮಿ ಚಿಂತಾಕ್ರಾಂತರಾದರು, ದುಃಖಭರಿತರಾದರು.</verse>
				<verse number="38">“ನನ್ನ ಮನೋವೇದನೆ ಪ್ರಾಣಹಿಂಡುವಷ್ಟು ತೀವ್ರವಾಗಿದೆ. ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರಿ,” ಎಂದರು.</verse>
				<verse number="39">ಅನಂತರ ಅವರು ಅಲ್ಲಿಂದ ಇನ್ನೂ ಸ್ವಲ್ಪ ಮುಂದಕ್ಕೆ ಹೋಗಿ, ನೆಲದ ಮೇಲೆ ಅಧೋಮುಖವಾಗಿ ಬಿದ್ದು ಪ್ರಾರ್ಥನೆಮಾಡಿದರು. “ನನ್ನ ಪಿತನೇ, ಸಾಧ್ಯವಾದರೆ ಈ ಕಷ್ಟದ ಕೊಡವು ನನ್ನಿಂದ ದೂರವಾಗಲಿ, ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.</verse>
				<verse number="40">ಅನಂತರ ಆ ಮೂವರು ಶಿಷ್ಯರ ಬಳಿಗೆ ಬಂದು, ಅವರು ನಿದ್ರಿಸುತ್ತಿರುವುದನ್ನು ಕಂಡರು. ಪೇತ್ರನನ್ನು ಉದ್ದೇಶಿಸಿ, “ಏನಿದು, ಒಂದು ಗಂಟೆಯಾದರೂ ನನ್ನೊಡನೆ ಎಚ್ಚರವಾಗಿರಲು ನಿಮ್ಮಿಂದ ಆಗದೇ ಹೋಯಿತೇ?</verse>
				<verse number="41">ಪ್ರಲೋಭನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥನೆಮಾಡಿರಿ. ಆತ್ಮಕ್ಕೇನೊ ಆಸಕ್ತಿ ಇದೆ, ಆದರೆ ದೇಹಕ್ಕೆ ಶಕ್ತಿಸಾಲದು,” ಎಂದರು.</verse>
				<verse number="42">ಎರಡನೆಯ ಬಾರಿ ಹಿಂದಕ್ಕೆ ಹೋಗಿ ಇಂತೆಂದು ಪ್ರಾರ್ಥನೆಮಾಡಿದರು: “ನನ್ನ ಪಿತನೇ, ನಾನು ಸೇವಿಸದ ಹೊರತು ಈ ಕಷ್ಟದ ಕೊಡ ನನ್ನಿಂದ ತೊಲಗದಾದರೆ ಅದು ನಿಮ್ಮ ಚಿತ್ತದಂತೆಯೇ ಆಗಲಿ,”</verse>
				<verse number="43">ಯೇಸು ಮರಳಿ ಆ ಶಿಷ್ಯರ ಬಳಿಗೆ ಬಂದಾಗ ಅವರು ಇನ್ನೂ ನಿದ್ರಾವಸ್ಥೆಯಲ್ಲಿದ್ದರು. ಅವರ ಕಣ್ಣುಗಳು ಭಾರವಾಗಿ ಇದ್ದವು.</verse>
				<verse number="44">ಪುನಃ ಅವರನ್ನು ಬಿಟ್ಟು ಹಿಂದಿರುಗಿ ಮೂರನೆಯ ಬಾರಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದರು.</verse>
				<verse number="45">ಅದಾದ ಬಳಿಕ ಶಿಷ್ಯರನ್ನು ಸಮೀಪಿಸಿ, “ನೀವು ಇನ್ನೂ ನಿದ್ರಿಸಿ ವಿಶ್ರಮಿಸುತ್ತಾ ಇರುವಿರೋ? ಸಾಕು, ಸಮಯ ಸಮೀಪಿಸಿಬಿಟ್ಟಿತು. ನರಪುತ್ರನು ದುರ್ಜನರ ಕೈವಶವಾಗಲಿದ್ದಾನೆ.</verse>
				<verse number="46">ಎದ್ದೇಳಿ, ಹೋಗೋಣ. ನನಗೆ ದ್ರೋಹ ಬಗೆಯುವವನು ಹತ್ತಿರವೇ ಇದ್ದಾನೆ, ನೋಡಿ,” ಎಂದರು.</verse>
				<verse number="47">ಯೇಸುಸ್ವಾಮಿ ಇನ್ನೂ ಮಾತನಾಡುತ್ತಿದ್ದ ಹಾಗೆ, ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದಿದ್ದ ಒಂದು ದೊಡ್ಡ ಗುಂಪು ಅವನೊಂದಿಗೆ ಇತ್ತು. ಮುಖ್ಯಯಾಜಕರೂ ಜನರ ಪ್ರಮುಖರೂ ಅವರನ್ನು ಕಳುಹಿಸಿದ್ದರು.</verse>
				<verse number="48">‘ನಾನು ಯಾರಿಗೆ ಮುದ್ದಿಡುತ್ತೇನೋ ಆತನೇ ಆ ವ್ಯಕ್ತಿ. ಆತನನ್ನು ಹಿಡಿದುಕೊಳ್ಳಿ,’ ಎಂದು ಆ ಗುರುದ್ರೋಹಿ ಅವರಿಗೆ ಮೊದಲೇ ಸೂಚನೆಕೊಟ್ಟಿದ್ದನು.</verse>
				<verse number="49">ಅದರಂತೆಯೇ ಅವನು ಯೇಸುಸ್ವಾಮಿಯ ಸಮೀಪಕ್ಕೆ ನೇರವಾಗಿ ಬಂದು, “ಗುರುವೇ, ನಮಸ್ಕಾರ,” ಎಂದು ಹೇಳುತ್ತಾ ಅವರಿಗೆ ಮುದ್ದಿಟ್ಟನು.</verse>
				<verse number="50">ಯೇಸು ಅವನಿಗೆ, “ಮಿತ್ರಾ, ನೀನು ಮಾಡಬಂದ ಕಾರ್ಯವನ್ನು ಮಾಡಿಮುಗಿಸು,” ಎಂದರು. ಆಗ ಆ ಜನರು ಹತ್ತಿರಕ್ಕೆ ಬಂದು, ಯೇಸುವನ್ನು ಹಿಡಿದು ಬಂಧಿಸಿದರು.</verse>
				<verse number="51">ಕೂಡಲೆ ಯೇಸುವಿನ ಸಂಗಡ ಇದ್ದ ಒಬ್ಬನು ತನ್ನ ಖಡ್ಗವನ್ನು ಹಿರಿದು, ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿಬಿಟ್ಟನು.</verse>
				<verse number="52">ಆಗ ಯೇಸು ಅವನಿಗೆ, “ನಿನ್ನ ಖಡ್ಗವನ್ನು ಒರೆಗೆ ಹಾಕು. ಖಡ್ಗ ಎತ್ತಿದವರೆಲ್ಲರೂ ಖಡ್ಗದಿಂದಲೇ ಹತರಾಗುವರು.</verse>
				<verse number="53">ನಾನು ನನ್ನ ಪಿತನನ್ನು ಕೇಳಿಕೊಂಡರೆ ಅವರು ತಕ್ಷಣವೇ ಹನ್ನೆರಡು ದಳಗಳಿಗಿಂತಲೂ ಹೆಚ್ಚು ದೇವದೂತರನ್ನು ಕಳಿಸುವುದಿಲ್ಲವೆಂದುಕೊಂಡೆಯಾ?</verse>
				<verse number="54">ಆದರೆ, ಈ ಪ್ರಕಾರವೇ ಆಗಬೇಕು ಎನ್ನುವ ಪವಿತ್ರಗ್ರಂಥದ ವಾಕ್ಯ ನೆರವೇರುವುದಾದರೂ ಹೇಗೆ?” ಎಂದರು.</verse>
				<verse number="55">ಅದೇ ಸಂದರ್ಭದಲ್ಲಿ ಯೇಸುಸ್ವಾಮಿ ಜನರ ಗುಂಪನ್ನು ಉದ್ದೇಶಿಸಿ, “ದರೋಡೆಗಾರನನ್ನು ಹಿಡಿಯುವುದಕ್ಕೋ ಎಂಬಂತೆ ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದುಕೊಂಡು ನನ್ನನ್ನು ಬಂಧಿಸಲು ಬರಬೇಕಾಗಿತ್ತೆ? ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ಕುಳಿತು ಬೋಧನೆಮಾಡುತ್ತಾ ಇದ್ದೆ. ಆಗ ನೀವು ನನ್ನನ್ನು ಬಂಧಿಸಲಿಲ್ಲ.</verse>
				<verse number="56">ಆದರೆ ಪವಿತ್ರಗ್ರಂಥದ ಪ್ರವಾದನೆಗಳು ಈಡೇರಲೆಂದೇ ಇದೆಲ್ಲಾ ಜರುಗಿದೆ,” ಎಂದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ತೊರೆದು ಪಲಾಯನಮಾಡಿದರು.</verse>
				<verse number="57">ಬಳಿಕ ಯೇಸುಸ್ವಾಮಿಯನ್ನು ಬಂಧಿಸಿದ್ದವರು ಅವರನ್ನು ಪ್ರಧಾನಯಾಜಕ ಕಾಯಫನ ಬಳಿಗೆ ಕರೆದೊಯ್ದರು.</verse>
				<verse number="58">ಅಲ್ಲಿ ಧರ್ಮಶಾಸ್ತ್ರಿಗಳೂ ಪ್ರಮುಖರೂ ಸಭೆಸೇರಿದ್ದರು. ಪೇತ್ರನಾದರೋ ದೂರದಿಂದ ಯೇಸುವನ್ನು ಹಿಂಬಾಲಿಸುತ್ತಿದ್ದನು. ಅವನು ಪ್ರಧಾನಯಾಜಕನ ಭವನದವರೆಗೂ ಬಂದು, ಹೊರಾಂಗಣವನ್ನು ಹೊಕ್ಕು ಪಹರೆಯವರ ಜೊತೆ ಕುಳಿತುಕೊಂಡನು. ಇದೆಲ್ಲ ಹೇಗೆ ಕೊನೆಗೊಳ್ಳುವುದೆಂದು ನೋಡಬೇಕೆಂಬ ಉದ್ದೇಶ ಅವನದಾಗಿತ್ತು.</verse>
				<verse number="59">ಇತ್ತ ಮುಖ್ಯಯಾಜಕರೂ ಉಚ್ಛನ್ಯಾಯಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಸುಳ್ಳುಸಾಕ್ಷಿಯನ್ನು ಹುಡುಕುತ್ತಿದ್ದರು.</verse>
				<verse number="60">ಹಲವಾರು ಸುಳ್ಳುಸಾಕ್ಷಿಗಳು ಮುಂದೆ ಬಂದರು. ಆದರೂ ಸರಿಯಾದ ಒಂದು ಸಾಕ್ಷ್ಯವೂ ಅವರಿಗೆ ದೊರಕಲಿಲ್ಲ. ಕಡೆಗೆ ಇಬ್ಬರು ಮುಂದೆ ಬಂದು,</verse>
				<verse number="61">“ ‘ಮಹಾದೇವಾಲಯವನ್ನು ಕೆಡವಿಬಿಟ್ಟು ಅದನ್ನು ಮೂರು ದಿನಗಳಲ್ಲಿ ಮರಳಿ ಕಟ್ಟುವ ಶಕ್ತಿ ನನಗಿದೆ,’ ಎಂದು ಇವನು ಹೇಳಿದ್ದಾನೆ,” ಎಂದರು.</verse>
				<verse number="62">ಆಗ ಪ್ರಧಾನಯಾಜಕರು ಎದ್ದುನಿಂತು ಯೇಸುವನ್ನು ನೋಡಿ, “ಈ ಜನರು ನಿನಗೆ ವಿರುದ್ಧ ತಂದಿರುವ ಆರೋಪಣೆಗಳನ್ನು ಕೇಳುತ್ತಿರುವೆಯಾ? ಇವುಗಳಿಗೆ ನಿನ್ನ ಉತ್ತರ ಏನು?” ಎಂದು ಪ್ರಶ್ನಿಸಿದರು.</verse>
				<verse number="63">ಆದರೆ ಯೇಸು ಮೌನವಾಗಿದ್ದರು. “ಜೀವಂತ ದೇವರ ಮೇಲೆ ಆಣೆಯಿರಿಸಿ ನಾನು ನಿನ್ನನ್ನು ಕೇಳುತ್ತಿದ್ದೇನೆ, ‘ನೀನು ದೇವರ ಪುತ್ರ ಹಾಗೂ ಅಭಿಷಿಕ್ತನಾದ ಲೋಕೋದ್ಧಾರಕನೋ?’ ನಮಗೆ ಹೇಳು,” ಎಂದನು ಆ ಪ್ರಧಾನಯಾಜಕ.</verse>
				<verse number="64">ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ; ಮಾತ್ರವಲ್ಲ, ನಾನು ಹೇಳುವುದನ್ನು ಕೇಳಿ; ನರಪುತ್ರನು ಸರ್ವಶಕ್ತ ದೇವರ ಬಲಗಡೆ ಆಸೀನನಾಗಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ಇನ್ನು ಮುಂದಕ್ಕೆ ಕಾಣುವಿರಿ,” ಎಂದರು.</verse>
				<verse number="65">ಇದನ್ನು ಕೇಳಿದ್ದೇ ಪ್ರಧಾನಯಾಜಕನು ತನ್ನ ಉಡುಪನ್ನು ಕೋಪದಿಂದ ಹರಿದುಕೊಂಡನು. “ಇವನು ದೇವದೂಷಣೆ ಆಡಿದ್ದಾನೆ. ಇನ್ನು ನಮಗೆ ಸಾಕ್ಷಿಗಳು ಏತಕ್ಕೆ?</verse>
				<verse number="66">ಇವನಾಡಿದ ದೇವದೂಷಣೆಯನ್ನು ನೀವೇ ಕೇಳಿದ್ದೀರಿ. ಈಗ ನಿಮ್ಮ ತೀರ್ಮಾನ ಏನು?” ಎಂದು ಕೇಳಿದನು. ಅವರು, “ಇವನಿಗೆ ಮರಣದಂಡನೆ ಆಗಬೇಕು,” ಎಂದು ಉತ್ತರಕೊಟ್ಟರು.</verse>
				<verse number="67">ಬಳಿಕ ಅವರು ಯೇಸುಸ್ವಾಮಿಯ ಮುಖದ ಮೇಲೆ ಉಗುಳಿದರು; ಅವರನ್ನು ಗುದ್ದಿದರು.</verse>
				<verse number="68">ಕೆಲವರು ಅವರ ಕೆನ್ನೆಗೆ ಹೊಡೆದು, “ಎಲೈ ಕ್ರಿಸ್ತಾ, ನಿನ್ನನ್ನು ಹೊಡೆದವರಾರು? ನಮಗೆ ಪ್ರವಾದಿಸಿ ಹೇಳು,” ಎಂದರು.</verse>
				<verse number="69">ಇತ್ತ ಪೇತ್ರನು ಹೊರಾಂಗಣದಲ್ಲಿ ಕುಳಿತು ಇದ್ದನು. ದಾಸಿಯೊಬ್ಬಳು ಆತನ ಬಳಿಗೆ ಬಂದು, “ನೀನು ಸಹ ಗಲಿಲೇಯದ ಯೇಸುವಿನೊಂದಿಗೆ ಇದ್ದವನು,” ಎಂದಳು.</verse>
				<verse number="70">“ನೀನು ಹೇಳುವುದು ಏನೆಂದು ನನಗೆ ತಿಳಿಯದು,” ಎಂದು ಪೇತ್ರನು ಎಲ್ಲರ ಮುಂದೆ ನಿರಾಕರಿಸಿದನು.</verse>
				<verse number="71">ಆತ ಅಲ್ಲಿಂದ ಎದ್ದು ಹೆಬ್ಬಾಗಿಲ ಬಳಿ ಬಂದಾಗ ಇನ್ನೊಬ್ಬ ದಾಸಿ ಆತನನ್ನು ಕಂಡು, “ಈತ ನಜರೇತಿನ ಯೇಸುವಿನೊಂದಿಗೆ ಇದ್ದವನೇ,” ಎಂದು ಅಲ್ಲಿದ್ದವರಿಗೆ ತಿಳಿಸಿದಳು.</verse>
				<verse number="72">ಪೇತ್ರನು, “ಆ ಮನುಷ್ಯ ಯಾರೋ ನಾನರಿಯೆ,” ಎಂದು ಆಣೆಯಿಟ್ಟು ಇನೊಮ್ಮೆ ನಿರಾಕರಿಸಿದನು.</verse>
				<verse number="73">ಸ್ವಲ್ಪಹೊತ್ತಾದ ಮೇಲೆ ಅಲ್ಲಿ ನಿಂತಿದ್ದವರು ಪೇತ್ರನ ಹತ್ತಿರಕ್ಕೆ ಬಂದು, “ಖಂಡಿತವಾಗಿ ನೀನೂ ಅವರಲ್ಲಿ ಒಬ್ಬನು. ನೀನು ಮಾತನಾಡುವ ರೀತಿಯೇ ನಿನ್ನನ್ನು ತೋರಿಸಿಕೊಡುತ್ತದೆ,” ಎಂದು ಹೇಳಿದರು.</verse>
				<verse number="74">ಆಗ ಪೇತ್ರನು ತನ್ನನ್ನೇ ಶಪಿಸಿಕೊಳ್ಳಲಾರಂಭಿಸಿ, “ಆ ಮನುಷ್ಯನನ್ನು ನಾನು ಖಂಡಿತವಾಗಿ ಅರಿಯೆನು,” ಎಂದು ಆಣೆಯಿಟ್ಟು ಹೇಳಿದನು.</verse>
				<verse number="75">ಆ ಕ್ಷಣವೇ ಕೋಳಿಕೂಗಿತು. “ಕೋಳಿಕೂಗುವ ಮೊದಲೇ, ‘ಆತನನ್ನು ನಾನರಿಯೆ’ಎಂದು ನನ್ನನ್ನು ಮೂರುಬಾರಿ ನಿರಾಕರಿಸುವೆ,” ಎಂದ ಸ್ವಾಮಿಯ ನುಡಿ ಪೇತ್ರನ ನೆನಪಿಗೆ ಬಂದಿತು. ಆತನು ಅಲ್ಲಿಂದ ಹೊರಗೆ ಹೋಗಿ, ಬಹಳವಾಗಿ ವ್ಯಥೆಪಟ್ಟು ಅತ್ತನು.</verse>
			</chapter>
			<chapter number="27">
				<verse number="1">ಬೆಳಗಾಯಿತು. ಎಲ್ಲ ಮುಖ್ಯಯಾಜಕರೂ ಜನರ ಪ್ರಮುಖರೂ ಸೇರಿ ಯೇಸುವನ್ನು ಕೊಲ್ಲಿಸುವುದಕ್ಕೆ ಸಮಾಲೋಚನೆಮಾಡಿದರು.</verse>
				<verse number="2">ಅಂತೆಯೇ ಯೇಸುವಿಗೆ ಬೇಡಿ ಹಾಕಿಸಿ, ಅವರನ್ನು ರಾಜ್ಯಪಾಲ ಪಿಲಾತನ ಬಳಿಗೆ ಕರೆದೊಯ್ದು ಅವನ ವಶಕ್ಕೆ ಒಪ್ಪಿಸಿದರು.</verse>
				<verse number="3">ಯೇಸುಸ್ವಾಮಿ ದಂಡನೆಗೆ ಗುರಿಯಾದರೆಂಬುದನ್ನು ಕಂಡು, ಗುರುದ್ರೋಹಿ ಯೂದನು ಪರಿತಾಪಗೊಂಡನು. ಆ ಮೂವತ್ತು ಬೆಳ್ಳಿನಾಣ್ಯಗಳನ್ನು ಮುಖ್ಯಯಾಜಕರ ಮತ್ತು ಪ್ರಮುಖರ ಬಳಿಗೆ ಮರಳಿ ತಂದನು.</verse>
				<verse number="4">“ನಾನು ನಿರ್ದೋಷಿಯನ್ನು ಹಿಡಿದುಕೊಟ್ಟು ಪಾಪಕಟ್ಟಿಕೊಂಡೆ,” ಎಂದು ಹೇಳಿದನು. ಅದಕ್ಕೆ ಅವರು, ಅದರಿಂದ ನಮಗೇನು? ಅದನ್ನು ನೀನೇ ನೋಡಿಕೋ,’ ಎಂದುಬಿಟ್ಟರು.</verse>
				<verse number="5">ಆಗ ಅವನು ಆ ಹಣವನ್ನು ದೇವಾಲಯದಲ್ಲೇ ಎಸೆದು, ಹೊರಟುಹೋಗಿ ನೇಣುಹಾಕಿಕೊಂಡು ಸತ್ತನು.</verse>
				<verse number="6">ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು, “ಇದು ರಕ್ತದ ಕ್ರಯ. ಇದನ್ನು ಕಾಣಿಕೆ ಕೋಶದಲ್ಲಿ ಹಾಕುವುದು ಸರಿಯಲ್ಲ,” ಎಂದುಕೊಂಡರು.</verse>
				<verse number="7">ಕಡೆಗೆ ಒಂದು ನಿರ್ಧಾರಕ್ಕೆ ಬಂದರು. ಪರದೇಶಿಗಳನ್ನು ಹೂಳುವುದಕ್ಕೋಸ್ಕರ ‘ಕುಂಬಾರನ ಹೊಲ’ವನ್ನು ಆ ಹಣಕೊಟ್ಟು ಕೊಂಡುಕೊಂಡರು.</verse>
				<verse number="8">ಈ ಕಾರಣದಿಂದಲೇ ಅದನ್ನು ‘ನೆತ್ತರ ನೆಲ’ ಎಂದು ಇಂದಿಗೂ ಕರೆಯಲಾಗುತ್ತಿದೆ. ಹೀಗೆ,</verse>
				<verse number="9">“ಮೂವತ್ತು ಬೆಳ್ಳಿ ನಾಣ್ಯಗಳನ್ನೆತ್ತಿ ಸರ್ವೇಶ್ವರಸ್ವಾಮಿ ನನಗಿತ್ತ ಆದೇಶದಂತೆ ‘ಕುಂಬಾರನ ಹೊಲ’ ಕೊಳ್ಳಲು ಅದನ್ನು ತೆತ್ತರು. ಅಮೂಲ್ಯ ವ್ಯಕ್ತಿಗೆ ಕಟ್ಟಿದ ಬೆಲೆಯದು, ಇಸ್ರಯೇಲ ಜನರು ಒಪ್ಪಿದ ಮೊತ್ತವದು,” ಎಂದು ವಚನಿಸಿದ ಪ್ರವಾದಿ ಯೆರೆಮೀಯನ ಮಾತುಗಳು ಈಡೇರಿದವು.</verse>
				<verse number="10"></verse>
				<verse number="11">ಯೇಸುಸ್ವಾಮಿಯನ್ನು ರಾಜ್ಯಪಾಲನ ಮುಂದೆ ನಿಲ್ಲಿಸಿದರು. “ನೀನು ಯೆಹೂದ್ಯರ ಅರಸನೋ?” ಎಂದು ರಾಜ್ಯಪಾಲ ಪ್ರಶ್ನಿಸಿದನು. ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ,” ಎಂದು ಮರುನುಡಿದರು.</verse>
				<verse number="12">ಆದರೆ ಮುಖ್ಯಯಾಜಕರೂ ಊರಪ್ರಮುಖರೂ ಮಾಡಿದ ಆಪಾದನೆಗಳಿಗೆ ಅವರು ಏನೂ ಉತ್ತರಕೊಡಲಿಲ್ಲ.</verse>
				<verse number="13">ಆಗ ಪಿಲಾತನು, “ಇವರು ನಿನಗೆ ವಿರುದ್ಧ ಇಷ್ಟೆಲ್ಲಾ ಹೇಳುತ್ತಿರುವುದು ನಿನಗೆ ಕೇಳಿಸುತ್ತಿಲ್ಲವೆ?” ಎಂದನು.</verse>
				<verse number="14">ಯೇಸು ಯಾವುದಕ್ಕೂ ಉತ್ತರಕೊಡಲಿಲ್ಲ. ಇದರಿಂದ ರಾಜ್ಯಪಾಲನಿಗೆ ಅತ್ಯಾಶ್ಚರ್ಯವಾಯಿತು.</verse>
				<verse number="15">ಪ್ರತಿ ಪಾಸ್ಕ ಹಬ್ಬದ ಸಂದರ್ಭದಲ್ಲಿ ಜನರು ಬಯಸುವ ಒಬ್ಬ ಕೈದಿಯನ್ನು ಬಿಡುಗಡೆಮಾಡುವುದು ರಾಜ್ಯಪಾಲನ ಪದ್ಧತಿಯಾಗಿತ್ತು.</verse>
				<verse number="16">ಆಗ ಬರಬ್ಬನೆಂಬ ಕುಪ್ರಸಿದ್ಧ ಕೈದಿಯೊಬ್ಬನು ಸೆರೆಯಲ್ಲಿದ್ದನು.</verse>
				<verse number="17">ಹೀಗಿರಲಾಗಿ, ಪಿಲಾತನು ಅಲ್ಲಿ ಕೂಡಿದ್ದ ಜನರನ್ನು ಉದ್ದೇಶಿಸಿ, “ನಾನು ಯಾರನ್ನು ಬಿಡುಗಡೆ ಮಾಡಬೇಕೆನ್ನುತ್ತೀರಿ? ಬರಬ್ಬನನ್ನೋ ಅಥವಾ ‘ಕ್ರಿಸ್ತ’ ಎಂದು ಕರೆಯಲಾಗುವ ಯೇಸುವನ್ನೋ?’ ಎಂದು ಕೇಳಿದನು.</verse>
				<verse number="18">ಆ ಜನರು ಅಸೂಯೆಯಿಂದಲೇ ಯೇಸುವನ್ನು ಹಿಡಿದೊಪ್ಪಿಸಿದ್ದಾರೆಂದು ಅವನಿಗೆ ಅರಿವಾಗಿತ್ತು.</verse>
				<verse number="19">ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.</verse>
				<verse number="20">ಇತ್ತ, ಬರಬ್ಬನನ್ನು ಬಿಡುಗಡೆಮಾಡಿ ಯೇಸುವನ್ನು ಕೊಲ್ಲಬೇಕೆಂದು ಕೇಳಿಕೊಳ್ಳುವಂತೆ ಮುಖ್ಯಯಾಜಕರು ಮತ್ತು ಪ್ರಮುಖರು ಜನರನ್ನು ಪ್ರಚೋದಿಸಿದರು.</verse>
				<verse number="21">ರಾಜ್ಯಪಾಲನು ಪುನಃ ಜನರ ಗುಂಪನ್ನು ನೋಡಿ, “ಈ ಇಬ್ಬರಲ್ಲಿ ಯಾರನ್ನು ನಿಮಗೆ ಬಿಟ್ಟುಕೊಡಲಿ?” ಎಂದು ಕೇಳಿದನು. ಅದಕ್ಕೆ ಅವರು “ಬರಬ್ಬನನ್ನೇ” ಎಂದು ಉತ್ತರಕೊಟ್ಟರು.</verse>
				<verse number="22">“ಹಾಗಾದರೆ, ‘ಕ್ರಿಸ್ತ’ ಎಂದು ಕರೆಯಲಾಗುವ ಯೇಸುವನ್ನು ಏನುಮಾಡಲಿ?” ಎಂದು ಪಿಲಾತನು ಮರುಪ್ರಶ್ನೆ ಹಾಕಿದನು. ಅವರೆಲ್ಲರು, “ಅವನನ್ನು ಶಿಲುಬೆಗೇರಿಸಿ,” ಎಂದು ಉತ್ತರಿಸಿದರು.</verse>
				<verse number="23">“ಏಕೆ? ಇವನೇನು ಕೇಡುಮಾಡಿದ್ದಾನೆ?” ಎಂದು ಪಿಲಾತನು ಕೇಳಲು, “ಶಿಲುಬೆಗೇರಿಸಿ, ಶಿಲುಬೆಗೇರಿಸಿ,” ಎಂದು ಅವರು ಇನ್ನೂ ಹೆಚ್ಚಾಗಿ ಆರ್ಭಟಿಸಿದರು.</verse>
				<verse number="24">ಪಿಲಾತನು ತನ್ನ ಪ್ರಯತ್ನದಿಂದ ಏನೂ ಫಲಿಸುತ್ತಿಲ್ಲವೆಂದೂ ಅದಕ್ಕೆ ಬದಲಾಗಿ ದಂಗೆ ಏಳುವ ಸೂಚನೆಯಿದೆಯೆಂದೂ ಮನಗಂಡನು. ಆದುದರಿಂದ ನೀರನ್ನು ತರಿಸಿ, “ಈ ನಿರಪರಾಧಿಯ ರಕ್ತಪಾತಕ್ಕೆ ಹೊಣೆ ನಾನಲ್ಲ; ಅದಕ್ಕೆ ನೀವೇ ಹೊಣೆಗಾರರು,” ಎಂದು ಹೇಳಿ ಜನರೆದುರಿಗೆ ಕೈ ತೊಳೆದುಕೊಂಡನು.</verse>
				<verse number="25">ಅದಕ್ಕೆ ಜನರೆಲ್ಲರೂ, “ಅವನ ರಕ್ತ ನಮ್ಮ ಮೇಲೂ ನಮ್ಮ ಮಕ್ಕಳ ಮೇಲೂ ಇರಲಿ,” ಎಂದು ಕೂಗಿಕೊಂಡರು.</verse>
				<verse number="26">ಬಳಿಕ ಪಿಲಾತನು ಅವರ ಇಷ್ಟದಂತೆಯೇ ಬರಬ್ಬನನ್ನು ಬಿಟ್ಟುಕೊಟ್ಟನು. ಯೇಸುವನ್ನು ಕೊರಡೆಗಳಿಂದ ಹೊಡೆಸಿ ಶಿಲುಬೆಗೇರಿಸಲು ಒಪ್ಪಿಸಿಬಿಟ್ಟನು.</verse>
				<verse number="27">ರಾಜ್ಯಪಾಲನ ಸೈನಿಕರು ಯೇಸುಸ್ವಾಮಿಯನ್ನು ರಾಜಭವನದ ಒಳಕ್ಕೆ ಕರೆದೊಯ್ದರು. ಅವರ ಸೈನ್ಯಪಡೆಯೆಲ್ಲವು ಸ್ವಾಮಿಯನ್ನು ಸುತ್ತುಗಟ್ಟಿತು.</verse>
				<verse number="28">ಸೈನಿಕರು ಅವರ ಉಡುಪನ್ನು ಸುಲಿದು, ಕಡುಗೆಂಪು ಮೇಲಂಗಿಯೊಂದನ್ನು ಅವರಿಗೆ ಹೊದಿಸಿದರು.</verse>
				<verse number="29">ಮುಳ್ಳಿನಿಂದ ಒಂದು ಕಿರೀಟವನ್ನು ಹೆಣೆದು, ಅವರ ತಲೆಯ ಮೇಲೆ ಇರಿಸಿದರು. ಕೈಗೆ ಒಂದು ಕೋಲನ್ನು ಕೊಟ್ಟರು. ಆಮೇಲೆ ಅವರ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನಿಗೆ ಜಯವಾಗಲಿ!” ಎಂದು ಹೇಳಿ ಪರಿಹಾಸ್ಯಮಾಡಿದರು.</verse>
				<verse number="30">ಅವರ ಮೇಲೆ ಉಗುಳಿದರು. ಆ ಕೋಲನ್ನು ಕಿತ್ತುಕೊಂಡು ತಲೆಯಮೇಲೆ ಹೊಡೆದರು.</verse>
				<verse number="31">ಹೀಗೆ ಪರಿಹಾಸ್ಯಮಾಡಿ ಆದಮೇಲೆ, ಹೊದಿಸಿದ್ದ ಮೇಲಂಗಿಯನ್ನು ತೆಗೆದುಹಾಕಿ, ಅವರ ಉಡುಪನ್ನೇ ಪುನಃ ತೊಡಿಸಿದರು. ಬಳಿಕ ಅವರನ್ನು ಶಿಲುಬೆಗೇರಿಸಲು ಕರೆದೊಯ್ದರು.</verse>
				<verse number="32">ಸೈನಿಕರು ಯೇಸುಸ್ವಾಮಿಯನ್ನು ಕರೆದುಕೊಂಡು ಊರಹೊರಗೆ ಹೋಗುತ್ತಿದ್ದಾಗ ಸಿರೇನ್ ಪಟ್ಟಣದ ಸಿಮೋನ್ ಎಂಬಾತನನ್ನು ಕಂಡರು. ಯೇಸುವಿನ ಶಿಲುಬೆಯನ್ನು ಹೊತ್ತುಬರುವಂತೆ ಅವನನ್ನು ಬಲವಂತಮಾಡಿದರು.</verse>
				<verse number="33">ಅವರೆಲ್ಲರು ಗೊಲ್ಗೊಥ ಎಂಬ ಸ್ಥಳಕ್ಕೆ ಬಂದು ಸೇರಿದರು. (ಗೊಲ್ಗೊಥ ಎಂದರೆ ‘ಕಪಾಲ ಸ್ಥಳ’ ಎಂದು ಅರ್ಥ).</verse>
				<verse number="34">ಅಲ್ಲಿ ಕಹಿಬೆರೆಸಿದ ದ್ರಾಕ್ಷಾರಸವನ್ನು ಯೇಸುವಿಗೆ ಕುಡಿಯಲು ಕೊಟ್ಟರು. ಅವರು ಅದನ್ನು ರುಚಿನೋಡಿ ಕುಡಿಯಲು ಇಚ್ಛಿಸಲಿಲ್ಲ.</verse>
				<verse number="35">ಯೇಸುವನ್ನು ಶಿಲುಬೆಗೇರಿಸಿದ ಬಳಿಕ ಅವರ ಉಡುಪಿಗಾಗಿ ಸೈನಿಕರು ಚೀಟುಹಾಕಿ ತಮ್ಮತಮ್ಮೊಳಗೇ ಹಂಚಿಕೊಂಡರು.</verse>
				<verse number="36">ಅನಂತರ ಅಲ್ಲೇ ಕುಳಿತು ಕಾವಲುಕಾಯುತ್ತಾ ಇದ್ದರು.</verse>
				<verse number="37">“ಈತ ಯೇಸು, ಯೆಹೂದ್ಯರ ಅರಸ” ಎಂದು ಬರೆದಿದ್ದ ದೋಷಾರೋಪಣೆಯ ಫಲಕವನ್ನು ಅವರ ಶಿರಸ್ಸಿನ ಮೇಲ್ಭಾಗದಲ್ಲಿ ಇಟ್ಟರು.</verse>
				<verse number="38">ಯೇಸುವಿನ ಬಲಗಡೆ ಒಬ್ಬನು, ಎಡಗಡೆ ಒಬ್ಬನು, ಹೀಗೆ ಇಬ್ಬರು ಕಳ್ಳರನ್ನು ಅವರ ಸಂಗಡ ಶಿಲುಬೆಗೇರಿಸಿದರು.</verse>
				<verse number="39">ಪಕ್ಕದಲ್ಲಿ ಹಾದುಹೋಗುತ್ತಿದ್ದ ಜನರು ತಲೆಯಾಡಿಸುತ್ತಾ</verse>
				<verse number="40">“ಮಹಾದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಅದನ್ನು ಮತ್ತೆ ಕಟ್ಟಬಲ್ಲವನೇ, ಈಗ ನಿನ್ನನ್ನು ನೀನೇ ರಕ್ಷಿಸಿಕೋ; ನೀನು ದೇವರ ಪುತ್ರನಾದರೆ ಶಿಲುಬೆಯಿಂದ ಇಳಿದು ಬಾ,” ಎಂದು ಮೂದಲಿಸಿದರು.</verse>
				<verse number="41">ಅಂತೆಯೇ ಮುಖ್ಯಯಾಜಕರು, ಧರ್ಮಶಾಸ್ತ್ರಿಗಳು ಮತ್ತು ಪ್ರಮುಖರು,</verse>
				<verse number="42">“ಇವನು ಇತರರನ್ನು ರಕ್ಷಿಸಿದ; ಆದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲು ಇವನಿಂದಾಗದು; ಇಸ್ರಯೇಲಿನ ಅರಸನಂತೆ! ಈಗ ಶಿಲುಬೆಯಿಂದ ಇಳಿದು ಬರಲಿ; ಆಗ ಇವನನ್ನು ನಂಬುತ್ತೇವೆ.</verse>
				<verse number="43">ದೇವರಲ್ಲಿ ಭರವಸೆಯಿಟ್ಟಿದ್ದ; ತಾನು ‘ದೇವರ ಪುತ್ರ’ ಎಂದು ಹೇಳಿಕೊಳ್ಳುತ್ತಿದ್ದ; ದೇವರಿಗೆ ಇಷ್ಟವಾದವನು ಇವನಾಗಿದ್ದರೆ ದೇವರೇ ಬಂದು ಇವನನ್ನು ಬಿಡುಗಡೆಮಾಡಲಿ,” ಎಂದು ಅಪಹಾಸ್ಯಮಾಡುತ್ತಿದ್ದರು.</verse>
				<verse number="44">ಯೇಸುವಿನೊಡನೆ ಶಿಲುಬೆಗೇರಿಸಲಾಗಿದ್ದ ಕಳ್ಳರು ಕೂಡ ಅದೇ ರೀತಿ ಅಣಕಿಸಿದರು.</verse>
				<verse number="45">ಆಗ ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.</verse>
				<verse number="46">ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸುಸ್ವಾಮಿ, “ಏಲೀ, ಏಲೀ, ಲಮಾ ಸಬಕ್ತಾನಿ?” ಅಂದರೆ, “ನನ್ನ ದೇವರೇ, ನನ್ನ ದೇವರೇ, ನನ್ನನ್ನೇಕೆ ಕೈಬಿಟ್ಟಿರಿ?” ಎಂದು ಗಟ್ಟಿಯಾಗಿ ಕೂಗಿಕೊಂಡರು.</verse>
				<verse number="47">ಅಲ್ಲಿ ನಿಂತಿದ್ದವರಲ್ಲಿ ಕೆಲವರು ಇದನ್ನು ಕೇಳಿ, “ಇವನು ಎಲೀಯನನ್ನು ಕರೆಯುತ್ತಿದ್ದಾನೆ,” ಎಂದರು.</verse>
				<verse number="48">ಕೂಡಲೇ ಅವರಲೊಬ್ಬನು ಓಡಿಹೋಗಿ ಸ್ಪಂಜನ್ನು ತೆಗೆದುಕೊಂಡು ಬಂದು, ಅದನ್ನು ಹುಳಿರಸದಲ್ಲಿ ತೋಯಿಸಿ, ಒಂದು ಕೋಲಿನ ತುದಿಗೆ ಸಿಕ್ಕಿಸಿ, ಯೇಸುವಿಗೆ ಕುಡಿಯಲು ಕೊಟ್ಟನು.</verse>
				<verse number="49">ಮಿಕ್ಕವರು, “ತಾಳು, ಇವನನ್ನು ರಕ್ಷಿಸಲು ಎಲೀಯನು ಬರುವನೋ, ನೋಡೋಣ,” ಎಂದರು.</verse>
				<verse number="50">ಯೇಸುಸ್ವಾಮಿ ಮತ್ತೊಮ್ಮೆ ಗಟ್ಟಿಯಾಗಿ ಕೂಗಿ ಅಸುನೀಗಿದರು.</verse>
				<verse number="51">ಆಗ ಇಗೋ, ಮಹಾದೇವಾಲಯದ ತೆರೆಯು ಮೇಲಿಂದ ಕೆಳಗಿನವರೆಗೆ ಇಬ್ಭಾಗವಾಗಿ ಸೀಳಿಹೋಯಿತು; ಭೂಮಿ ನಡುಗಿತು,</verse>
				<verse number="52">ಬಂಡೆಗಳು ಸಿಡಿದವು; ಸಮಾಧಿಗಳು ತೆರೆದುಕೊಂಡವು. ನಿಧನಹೊಂದಿದ್ದ ಅನೇಕ ಭಕ್ತರ ದೇಹಗಳು ಜೀವಂತವಾಗಿ ಎದ್ದವು.</verse>
				<verse number="53">ಹೀಗೆ ಎದ್ದವರು ಸಮಾಧಿಗಳಿಂದ ಹೊರಗೆಬಂದು, ಯೇಸು ಪುನರುತ್ಥಾನ ಹೊಂದಿದ ಬಳಿಕ ಪವಿತ್ರನಗರಕ್ಕೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.</verse>
				<verse number="54">ಶತಾಧಿಪತಿ ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದುದೆಲ್ಲವನ್ನೂ ಕಂಡು ಭಯಭ್ರಾಂತರಾದರು. “ಸತ್ಯವಾಗಿಯೂ ಈತ ದೇವರ ಪುತ್ರನೇ ಸರಿ,” ಎಂದರು.</verse>
				<verse number="55">ಯೇಸುವನ್ನು ಗಲಿಲೇಯದಿಂದ ಹಿಂಬಾಲಿಸಿ ಬಂದಿದ್ದ ಹಾಗೂ ಅವರ ಸೇವೆಮಾಡಿದ ಮಹಿಳೆಯರೂ ಅಲ್ಲಿದ್ದರು. ಅವರು ಇದೆಲ್ಲವನ್ನು ದೂರದಿಂದ ನೋಡುತ್ತಾ ಇದ್ದರು.</verse>
				<verse number="56">ಅವರಲ್ಲಿ ಮಗ್ದಲದ ಮರಿಯಳು, ಯಕೋಬ ಹಾಗೂ ಜೋಸೆಫನ ತಾಯಿ ಮರಿಯಳು ಮತ್ತು ಜೆಬೆದಾಯನ ಮಕ್ಕಳ ತಾಯಿ ಇದ್ದರು.</verse>
				<verse number="57">ಸಂಜೆಯಾಯಿತು. ಅರಿಮತಾಯ ಊರಿನ ಜೋಸೆಫ್ ಎಂಬ ಒಬ್ಬ ಧನವಂತನು ಅಲ್ಲಿಗೆ ಬಂದನು. ಈತನು ಸಹ ಯೇಸುವಿನ ಶಿಷ್ಯನಾಗಿದ್ದನು.</verse>
				<verse number="58">ಈತ ಪಿಲಾತನ ಬಳಿಗೆ ಹೋಗಿ ಯೇಸುವಿನ ಪಾರ್ಥಿವ ಶರೀರವನ್ನು ತನಗೆ ಕೊಡಿಸಬೇಕೆಂದು ಬೇಡಿದನು. ಪಿಲಾತನು ಅದನ್ನು ಅವನಿಗೆ ಕೊಡುವಂತೆ ಅಪ್ಪಣೆಮಾಡಿದನು.</verse>
				<verse number="59">ಜೋಸೆಫ್ ಅದನ್ನು ತೆಗೆದುಕೊಂಡು ಶುದ್ಧವಾದ ನಾರುಮಡಿ ವಸ್ತ್ರದಿಂದ ಸುತ್ತಿದನು.</verse>
				<verse number="60">ತನಗೆಂದು ಬಂಡೆಯಲ್ಲಿ ಕೊರೆಯಲಾಗಿದ್ದ ಹೊಸ ಸಮಾಧಿಯಲ್ಲಿ ಅದನ್ನು ಇರಿಸಿದನು. ಆ ಸಮಾಧಿಯ ದ್ವಾರಕ್ಕೆ ಒಂದು ದೊಡ್ಡ ಕಲ್ಲನ್ನು ಉರುಳಿಸಿ ಹೊರಟುಹೋದನು.</verse>
				<verse number="61">ಮಗ್ದಲದ ಮರಿಯಳು ಮತ್ತು ಆ ಇನ್ನೊಬ್ಬ ಮರಿಯಳು ಅಲ್ಲೇ ಸಮಾಧಿಗೆ ಎದುರಾಗಿ ಕುಳಿತುಕೊಂಡಿದ್ದರು.</verse>
				<verse number="62">ಮಾರನೆಯ ದಿನ, ಅಂದರೆ, ‘ಸಿದ್ಧತೆಯ ದಿನ’ ಕಳೆದ ಮೇಲೆ, ಮುಖ್ಯಯಾಜಕರು ಮತ್ತು ಫರಿಸಾಯರು ಕೂಡಿ ಪಿಲಾತನ ಬಳಿಗೆ ಬಂದರು.</verse>
				<verse number="63">“ಸ್ವಾಮೀ, ಆ ಮೋಸಗಾರ ಬದುಕಿದ್ದಾಗ, ‘ಮೂರು ದಿನಗಳಾದ ಮೇಲೆ ನಾನು ಪುನರ್ಜೀವಂತನಾಗಿ ಏಳುವೆನು,’ ಎಂದು ಹೇಳಿದ್ದು ನಮಗೆ ಜ್ಞಾಪಕದಲ್ಲಿದೆ.</verse>
				<verse number="64">ಆದ್ದರಿಂದ ಮೂರನೆಯ ದಿನದ ತನಕ ಅವನ ಸಮಾಧಿಗೆ ಭದ್ರವಾದ ಕಾವಲಿರಿಸಲು ಅಪ್ಪಣೆಯಾಗಬೇಕು; ಇಲ್ಲದಿದ್ದರೆ ಅವನ ಶಿಷ್ಯರು ಅವನನ್ನು ಕದ್ದುಕೊಂಡುಹೋಗಿ, ಸತ್ತವನು ಬದುಕಿಬಂದಿದ್ದಾನೆ ಎಂದು ಜನರಿಗೆ ಹೇಳಬಹುದು; ಆಗ ಮೊದಲನೆಯ ಮೋಸಕ್ಕಿಂತ ಕಡೆಯದೇ ಕಡುಮೋಸವಾದೀತು,” ಎಂದು ಕೇಳಿಕೊಂಡರು.</verse>
				<verse number="65">ಪಿಲಾತನು ಅವರಿಗೆ, “ಕಾವಲುಗಾರರು ಇದ್ದಾರಲ್ಲವೆ? ಹೋಗಿ ನಿಮಗೆ ಬೇಕಾದಂತೆ ಭದ್ರಪಡಿಸಿಕೊಳ್ಳಿ,” ಎಂದನು.</verse>
				<verse number="66">ಅವರು ಹೋಗಿ, ಸಮಾಧಿಯ ಕಲ್ಲಿಗೆ ಮುದ್ರೆಹಾಕಿ, ಕಾವಲಿರಿಸಿ, ಸಮಾಧಿಯನ್ನು ಸುಭದ್ರಪಡಿಸಿದರು.</verse>
			</chapter>
			<chapter number="28">
				<verse number="1">‘ಸಬ್ಬತ್’ ದಿನ ಕಳೆದಿತ್ತು. ಭಾನುವಾರ ಬೆಳಗಾಗುವುದರಲ್ಲಿತ್ತು. ಮಗ್ದಲದ ಮರಿಯಳು ಮತ್ತು ಆ ಇನ್ನೊಬ್ಬ ಮರಿಯಳು ಸಮಾಧಿಯನ್ನು ನೋಡಲು ಬಂದರು.</verse>
				<verse number="2">ಇದ್ದಕ್ಕಿದ್ದಂತೆ ಭೂಮಿ ಗಡಗಡನೆ ನಡುಗಿತು. ಆಗ ದೇವದೂತನು ಸ್ವರ್ಗದಿಂದ ಇಳಿದುಬಂದನು. ಸಮಾಧಿಯ ಕಲ್ಲನ್ನು ಹಿಂದಕ್ಕೆ ಉರುಳಿಸಿ ಅದರ ಮೇಲೆ ಕುಳಿತುಕೊಂಡನು.</verse>
				<verse number="3">ಆತನ ರೂಪ ಮಿಂಚಿನಂತೆ ಹೊಳೆಯುತ್ತಿತ್ತು; ಉಡುಪು ಹಿಮದಂತೆ ಬೆಳ್ಳಗಿತ್ತು.</verse>
				<verse number="4">ಕಾವಲಿನವರು ಆತನನ್ನು ಕಂಡು ಭಯದಿಂದ ನಡುಗುತ್ತಾ ಸತ್ತಂತಾದರು.</verse>
				<verse number="5">ಆಗ ದೂತನು ಆ ಮಹಿಳೆಯರಿಗೆ, “ಹೆದರಬೇಡಿ, ಶಿಲುಬೆಗೇರಿಸಿದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆ. ಅವರು ಇಲ್ಲಿಲ್ಲ;</verse>
				<verse number="6">ಅವರೇ ಹೇಳಿದಂತೆ ಪುನರುತ್ಥಾನ ಹೊಂದಿದ್ದಾರೆ. ಬನ್ನಿ, ಅವರನ್ನಿಟ್ಟಿದ್ದ ಸ್ಥಳವನ್ನು ನೋಡಿ.</verse>
				<verse number="7">ಈಗ ಬೇಗನೆ ಹೋಗಿ, ಅವರ ಶಿಷ್ಯರಿಗೆ, ‘ಸತ್ತಿದ್ದವರು ಪುನರುತ್ಥಾನ ಹೊಂದಿದ್ದಾರೆ; ಅವರು ನಿಮಗಿಂತ ಮುಂಚಿತವಾಗಿ ಗಲಿಲೇಯಕ್ಕೆ ಹೋಗುವರು; ಅಲ್ಲೇ ಅವರನ್ನು ಕಾಣುವಿರಿ,’ ಎಂದು ತಿಳಿಸಿರಿ. ನಾನು ನಿಮಗೆ ತಿಳಿಸಬೇಕಾದ ಸಮಾಚಾರ ಇದೇ, ಮರೆಯದಿರಿ,” ಎಂದನು.</verse>
				<verse number="8">ಅದರಂತೆಯೇ ಆ ಮಹಿಳೆಯರು ಭಯಮಿಶ್ರಿತ ಆನಂದದಿಂದ ಸಮಾಧಿಯನ್ನು ಬಿಟ್ಟು ಕೂಡಲೇ ಹೊರಟರು. ಶಿಷ್ಯರಿಗೆ ಈ ಸಮಾಚಾರವನ್ನು ಮುಟ್ಟಿಸಲು ಧಾವಿಸಿದರು.</verse>
				<verse number="9">ತಟ್ಟನೆ, ಯೇಸುವೇ ಅವರನ್ನು ಎದುರುಗೊಂಡು, “ನಿಮಗೆ ಶುಭವಾಗಲಿ!” ಎಂದರು. ಆ ಮಹಿಳೆಯರು ಹತ್ತಿರಕ್ಕೆ ಬಂದು, ಅವರ ಪಾದಕ್ಕೆರಗಿ ಪೂಜಿಸಿದರು.</verse>
				<verse number="10">ಆಗ ಯೇಸು ಅವರಿಗೆ, “ಭಯಪಡಬೇಡಿ, ನನ್ನ ಸೋದರರ ಬಳಿಗೆ ಹೋಗಿ ಅವರು ಗಲಿಲೇಯಕ್ಕೆ ಹೋಗಬೇಕೆಂದೂ ಅಲ್ಲಿ ಅವರು ನನ್ನನ್ನು ಕಾಣುವರೆಂದೂ ತಿಳಿಸಿರಿ,” ಎಂದು ಹೇಳಿದರು.</verse>
				<verse number="11">ಇತ್ತ ಆ ಮಹಿಳೆಯರು ಹೋಗುತ್ತಿದ್ದಂತೆ, ಅತ್ತ ಕಾವಲುಗಾರರಲ್ಲಿ ಕೆಲವರು ನಗರಕ್ಕೆ ಬಂದು ನಡೆದ ಸಂಗತಿಯನ್ನೆಲ್ಲಾ ಮುಖ್ಯಯಾಜಕರಿಗೆ ವರದಿಮಾಡಿದರು.</verse>
				<verse number="12">ಇವರು ಪ್ರಮುಖರೊಂದಿಗೆ ಸಭೆಸೇರಿ ಒಂದು ಸಂಚುಹೂಡಿದರು. ಸೈನಿಕರಿಗೆ ಭಾರಿ ಲಂಚಕೊಟ್ಟು,</verse>
				<verse number="13">“ಅವನ ಶಿಷ್ಯರು ರಾತ್ರಿ ವೇಳೆಯಲ್ಲಿ ಬಂದು, ನಾವು ನಿದ್ರೆಮಾಡುತ್ತಿದ್ದಾಗ ಅವನನ್ನು ಕದ್ದುಕೊಂಡು ಹೋದರೆಂದು ಜನರಿಗೆ ಹೇಳಿರಿ;</verse>
				<verse number="14">ಈ ಸುದ್ದಿ ರಾಜ್ಯಪಾಲನ ಕಿವಿಗೆ ಬಿದ್ದರೆ, ನಾವು ಅವರನ್ನು ಸಮಾಧಾನಪಡಿಸುತ್ತೇವೆ; ನಿಮಗೇನೂ ಆಗದಂತೆ ನೋಡಿಕೊಳ್ಳುತ್ತೇವೆ,’ ಎಂದು ಹೇಳಿದರು.</verse>
				<verse number="15">ಸೈನಿಕರು ಲಂಚವನ್ನು ತೆಗೆದುಕೊಂಡು ತಮಗೆ ಹೇಳಿಕೊಟ್ಟಂತೆಯೇ ಮಾಡಿದರು. ಈ ಕಟ್ಟುಕತೆ ಯೆಹೂದ್ಯರಲ್ಲಿ ಹಬ್ಬಿ ಇಂದಿನವರೆಗೂ ಪ್ರಚಲಿತವಾಗಿದೆ.</verse>
				<verse number="16">ಹನ್ನೊಂದುಮಂದಿ ಶಿಷ್ಯರು ಗಲಿಲೇಯಕ್ಕೆ ಹೋದರು. ಯೇಸು ಸೂಚಿಸಿದ್ದ ಬೆಟ್ಟಕ್ಕೆ ಬಂದರು.</verse>
				<verse number="17">ಅಲ್ಲಿ ಯೇಸುಸ್ವಾಮಿಯನ್ನು ಕಂಡು ಅವರನ್ನು ಪೂಜಿಸಿದರು. ಆದರೆ ಕೆಲವರು ಸಂದೇಹಪಟ್ಟರು.</verse>
				<verse number="18">ಆಗ ಯೇಸು ಹತ್ತಿರಕ್ಕೆ ಬಂದು ಮಾತಾಡಿದರು: “ಭೂಮಿಯಲ್ಲೂ ಸ್ವರ್ಗದಲ್ಲೂ ಸರ್ವಾಧಿಕಾರವನ್ನು ನನಗೆ ಕೊಡಲಾಗಿದೆ.</verse>
				<verse number="19">ಆದ್ದರಿಂದ ನೀವು ಹೋಗಿ, ಸಕಲ ದೇಶಗಳ ಜನರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ; ಪಿತ, ಸುತ, ಮತ್ತು ಪವಿತ್ರಾತ್ಮ ನಾಮದಲ್ಲಿ ಅವರಿಗೆ ದೀಕ್ಷಾಸ್ನಾನ ಮಾಡಿಸಿರಿ.</verse>
				<verse number="20">ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು</verse>
			</chapter>
		</book>
		<book number="41">
			<chapter number="1">
				<verse number="1">ದೇವರ ಪುತ್ರರಾದ ಯೇಸುಕ್ರಿಸ್ತರ ಶುಭಸಂದೇಶ. ಇದು ಪ್ರವಾದಿ ಯೆಶಾಯನು ಮೊದಲೇ ಬರೆದಿಟ್ಟ ಪ್ರಕಾರ ಪ್ರಾರಂಭವಾಯಿತು:</verse>
				<verse number="2">“ ‘ಇಗೋ, ನನ್ನ ದೂತನನ್ನು ನಿನಗೆ ಮುಂದಾಗಿ, ಕಳಿಸುವೆನು ಆತನು ನಿನ್ನ ಮಾರ್ಗವನ್ನು ಮುಂಚಿತವಾಗಿ ಸಿದ್ಧಗೊಳಿಸುವನು,’ ಎಂದು ದೇವರೇ ನುಡಿದಿದ್ದಾರೆ.”</verse>
				<verse number="3">“ ‘ಸರ್ವೇಶ್ವರನಿಗಾಗಿ ಮಾರ್ಗವನ್ನು ಸಿದ್ಧಪಡಿಸಿರಿ; ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ,’ ಎಂದೊಬ್ಬನು ಘೋಷಿಸುತ್ತಿದ್ದಾನೆ, ಬೆಂಗಾಡಿನಲ್ಲಿ.”</verse>
				<verse number="4">ಈ ಪ್ರವಾದನೆಗೆ ಅನುಗುಣವಾಗಿ ಯೊವಾನ್ನನು, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ; ಸ್ನಾನದೀಕ್ಷೆಯನ್ನು ಪಡೆದುಕೊಳ್ಳಿ. ದೇವರು ನಿಮ್ಮ ಪಾಪಗಳನ್ನು ಕ್ಷಮಿಸಿಬಿಡುವರು,” ಎಂದು ಬೆಂಗಾಡಿನಲ್ಲಿ ಜನರಿಗೆ ಸಾರಿ ಹೇಳುತ್ತಾ ಸ್ನಾನದೀಕ್ಷೆ ಕೊಡುತ್ತಾ ಇದ್ದನು.</verse>
				<verse number="5">ಜುದೇಯ ಪ್ರಾಂತ್ಯದ ಎಲ್ಲೆಡೆಗಳಿಂದಲೂ ಜೆರುಸಲೇಮಿನಿಂದಲೂ ಜನರು ಆತನ ಬಳಿಗೆ ಹೋಗುತ್ತಿದ್ದರು. ಅವರು ತಮ್ಮ ಪಾಪಗಳನ್ನು ಒಪ್ಪಿಕೊಳ್ಳುತ್ತಾ ಜೋರ್ಡನ್ ನದಿಯಲ್ಲಿ ಆತನಿಂದ ಸ್ನಾನದೀಕ್ಷೆ ಪಡೆದುಕೊಳ್ಳುತ್ತಿದ್ದರು.</verse>
				<verse number="6">ಯೊವಾನ್ನನು ಒಂಟೆಯ ತುಪ್ಪಟದ ಹೊದಿಕೆಯನ್ನು ಹೊದ್ದು, ಸೊಂಟಕ್ಕೆ ತೊಗಲಿನ ನಡುಪಟ್ಟಿಯನ್ನು ಕಟ್ಟಿಕೊಳ್ಳುತ್ತಿದ್ದನು. ಮಿಡತೆಗಳೂ ಕಾಡುಜೇನೂ ಆತನ ಆಹಾರವಾಗಿತ್ತು.</verse>
				<verse number="7">ಆತನು, “ನನ್ನಾನಂತರ ನನಗಿಂತಲೂ ಶಕ್ತರೊಬ್ಬರು ಬರುತ್ತಾರೆ; ಬಗ್ಗಿ ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಅರ್ಹನಲ್ಲ.</verse>
				<verse number="8">ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಟ್ಟೆನು; ಅವರಾದರೋ ನಿಮಗೆ ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನ ಕೊಡುವರು,” ಎಂದು ಘೋಷಿಸುತ್ತಿದ್ದನು.</verse>
				<verse number="9">ಹೀಗಿರುವಲ್ಲಿ, ಒಂದು ದಿನ ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಿಂದ ಬಂದು, ಜೋರ್ಡನ್ ನದಿಯಲ್ಲಿ ಯೊವಾನ್ನನಿಂದ ದೀಕ್ಷಾಸ್ನಾನ ಪಡೆದುಕೊಂಡರು.</verse>
				<verse number="10">ನೀರಿನಿಂದ ಅವರು ಮೇಲಕ್ಕೆ ಬರುತ್ತಿರುವಾಗಲೇ ಆಕಾಶವು ತೆರೆದು, ಪವಿತ್ರಾತ್ಮ ಪಾರಿವಾಳದ ರೂಪದಲ್ಲಿ ತಮ್ಮ ಮೇಲೆ ಇಳಿಯುತ್ತಿರುವುದನ್ನು ಕಂಡರು.</verse>
				<verse number="11">ಇದಲ್ಲದೆ, “ನೀನೇ ನನ್ನ ಪುತ್ರ, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎನ್ನುವ ದೈವವಾಣಿ ಕೇಳಿಸಿತು.</verse>
				<verse number="12">ಅನಂತರ ಯೇಸುಸ್ವಾಮಿಯನ್ನು ಪವಿತ್ರಾತ್ಮ ಬೆಂಗಾಡಿಗೆ ಕರೆದೊಯ್ದರು.</verse>
				<verse number="13">ವನ್ಯಮೃಗಗಳಿದ್ದ ಆ ಕಾಡಿನಲ್ಲಿ ಯೇಸು ನಾಲ್ವತ್ತು ದಿನಗಳನ್ನು ಕಳೆದರು. ಆ ಅವಧಿಯಲ್ಲಿ ಸೈತಾನನು ಅವರನ್ನು ಪರಿಶೋಧಿಸಲು ಪ್ರಯತ್ನಿಸಿದನು. ದೇವದೂತರು ಅವರನ್ನು ಉಪಚರಿಸಿದರು.</verse>
				<verse number="14">ಯೊವಾನ್ನನು ಬಂಧಿತನಾದ ಬಳಿಕ ಯೇಸುಸ್ವಾಮಿ ಗಲಿಲೇಯಕ್ಕೆ ಹೋಗಿ ದೇವರ ಶುಭಸಂದೇಶವನ್ನು ಸಾರಿದರು:</verse>
				<verse number="15">“ಕಾಲವು ಪರಿಪಕ್ವವಾಗಿದೆ, ದೇವರ ಸಾಮ್ರಾಜ್ಯವು ಸಮೀಪಿಸಿದೆ; ಪಶ್ಚಾತ್ತಾಪಪಟ್ಟು ಪಾಪಜೀವನಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ. ಶುಭಸಂದೇಶದಲ್ಲಿ ವಿಶ್ವಾಸವಿಡಿ,” ಎಂದು ಘೋಷಿಸಿದರು.</verse>
				<verse number="16">ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ನಡೆದುಹೋಗುತ್ತಿದ್ದಾಗ ಸಿಮೋನನನ್ನೂ ಆತನ ಸಹೋದರ ಅಂದ್ರೆಯನನ್ನೂ ಕಂಡರು. ಬೆಸ್ತರಾದ ಇವರು ಸರೋವರದಲ್ಲಿ ಬಲೆಬೀಸುತ್ತಾ ಇದ್ದರು.</verse>
				<verse number="17">ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿ ಬನ್ನಿ, ನಿಮ್ಮನ್ನು ಮನುಷ್ಯರನ್ನೇ ಹಿಡಿಯುವವರನ್ನಾಗಿ ಮಾಡುವೆನು,” ಎಂದು ಕರೆದರು.</verse>
				<verse number="18">ತಕ್ಷಣವೇ ಅವರು ತಮ್ಮ ಬಲೆಗಳನ್ನು ಬಿಟ್ಟು ಯೇಸುವನ್ನು ಹಿಂಬಾಲಿಸಿದರು.</verse>
				<verse number="19">ಇನ್ನೂ ಸ್ವಲ್ಪ ಮುಂದಕ್ಕೆ ಹೋಗುತ್ತಿದ್ದಾಗ, ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನರನ್ನು ಯೇಸು ಕಂಡರು.</verse>
				<verse number="20">ಅವರು ದೋಣಿಯಲ್ಲಿ ಕುಳಿತು ತಮ್ಮ ಬಲೆಗಳನ್ನು ಸರಿಪಡಿಸುತ್ತಿದ್ದರು. ಕೂಡಲೇ, ಯೇಸು ಅವರನ್ನು ಕರೆದರು. ಅವರೂ ತಮ್ಮ ತಂದೆ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲೇ ಬಿಟ್ಟು ಯೇಸುವನ್ನು ಹಿಂಬಾಲಿಸಿದರು.</verse>
				<verse number="21">ಬಳಿಕ ಅವರೆಲ್ಲರೂ ಕಫೆರ್ನವುಮ್ ಎಂಬ ಊರನ್ನು ಸೇರಿದರು. ಸಬ್ಬತ್‍ದಿನ ಬಂದ ಕೂಡಲೇ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಬೋಧಿಸತೊಡಗಿದರು. ಅವರ ಉಪದೇಶವನ್ನು ಕೇಳಿ ಜನರು ಬೆರಗಾದರು.</verse>
				<verse number="22">ಏಕೆಂದರೆ ಯೇಸು, ಧರ್ಮಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಾಣಿಯಿಂದ ಪ್ರಬೋಧಿಸುತ್ತಿದ್ದರು. ಅಲ್ಲಿ ದೆವ್ವ ಹಿಡಿದ ಒಬ್ಬನಿದ್ದನು.</verse>
				<verse number="23">ಅವನು, “ನಜರೇತಿನ ಯೇಸುವೇ, ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು?</verse>
				<verse number="24">ನೀವು ಯಾರೆಂದು ನನಗೆ ಗೊತ್ತು. ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಕಿರುಚಿದನು. ಆದರೆ ಯೇಸುಸ್ವಾಮಿ ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ಆ ದೆವ್ವಕ್ಕೆ ಆಜ್ಞಾಪಿಸಿದರು.</verse>
				<verse number="25">ದೆವ್ವವು ಆ ಮನುಷ್ಯನನ್ನು ಒದ್ದಾಡಿಸಿ, ಗಟ್ಟಿಯಾಗಿ ಚೀರುತ್ತಾ ಅವನನ್ನು ಬಿಟ್ಟುಹೋಯಿತು.</verse>
				<verse number="26">ಜನರೆಲ್ಲರೂ ಆಶ್ಚರ್ಯಚಕಿತರಾದರು.</verse>
				<verse number="27">“ಇದೇನು ಹೊಸ ಬೋಧನೆ!? ಈತ ದೆವ್ವಗಳಿಗೆ ಕೂಡ ಅಧಿಕಾರದಿಂದ ಆಜ್ಞಾಪಿಸುತ್ತಾನೆ; ಅವು ಈತ ಹೇಳಿದ ಹಾಗೆ ಕೇಳುತ್ತವೆಯಲ್ಲ!” ಎಂದು ಪರಸ್ಪರ ಮಾತಾಡಿಕೊಂಡರು.</verse>
				<verse number="28">ಕೂಡಲೇ ಗಲಿಲೇಯ ಪ್ರಾಂತ್ಯದ ಎಲ್ಲೆಡೆಗೂ ಯೇಸುವಿನ ಸಮಾಚಾರ ಹಬ್ಬಿಹರಡಿತು.</verse>
				<verse number="29">ಯೇಸುಸ್ವಾಮಿ ಪ್ರಾರ್ಥನಾಮಂದಿರದಿಂದ ಹೊರಟು ಯಕೋಬ ಮತ್ತು ಯೊವಾನ್ನನ ಸಂಗಡ ಸಿಮೋನ ಹಾಗೂ ಅಂದ್ರೆಯನ ಮನೆಗೆ ಹೋದರು.</verse>
				<verse number="30">ಸಿಮೋನನ ಅತ್ತೆ ಜ್ವರದಿಂದ ಮಲಗಿದ್ದಳು. ಇದನ್ನು ಯೇಸುವಿಗೆ ತಿಳಿಸಿದರು. ಯೇಸು ಆಕೆಯ ಬಳಿಗೆ ಹೋಗಿ ಕೈಹಿಡಿದು ಎಬ್ಬಿಸಿದರು. ಜ್ವರ ಬಿಟ್ಟುಹೋಯಿತು.</verse>
				<verse number="31">ಆಕೆ ಅವರೆಲ್ಲರನ್ನು ಸತ್ಕರಿಸಿದಳು.</verse>
				<verse number="32">ಸಂಜೆ ಸೂರ್ಯ ಮುಳುಗಿದ ಮೇಲೆ ಜನರು ರೋಗಿಗಳನ್ನೂ ದೆವ್ವಹಿಡಿದವರನ್ನೂ ಯೇಸುವಿನ ಬಳಿಗೆ ಕರೆತಂದರು.</verse>
				<verse number="33">ಊರಿಗೆ ಊರೇ ಆ ಮನೆಯ ಬಾಗಿಲಲ್ಲಿ ನೆರೆಯಿತು.</verse>
				<verse number="34">ನಾನಾ ರೋಗಗಳಿಂದ ನರಳುತ್ತಿದ್ದವರನ್ನು ಯೇಸು ಗುಣಪಡಿಸಿದರು. ದೆವ್ವ ಹಿಡಿದವರಿಂದ ದೆವ್ವ ಬಿಡಿಸಿದರು. ತಾವು ಯಾರೆಂಬುದನ್ನು ದೆವ್ವಗಳು ಅರಿತಿದ್ದುದರಿಂದ ಯೇಸು ಅವುಗಳಿಗೆ ಮಾತನಾಡಲು ಅವಕಾಶಕೊಡಲಿಲ್ಲ.</verse>
				<verse number="35">ಮುಂಜಾನೆ ಬೆಳಕುಹರಿಯುವ ಮುನ್ನ ಯೇಸುಸ್ವಾಮಿ ಎದ್ದು ಏಕಾಂತ ಪ್ರದೇಶಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದರು.</verse>
				<verse number="36">ಇತ್ತ, ಸಿಮೋನನೂ ಅವನ ಜೊತೆಗಾರರೂ ಯೇಸುವನ್ನು ಹುಡುಕಿಕೊಂಡು ಹೋದರು. ಅವರನ್ನು ಕಂಡಕೂಡಲೇ, “ಎಲ್ಲರು ತಮ್ಮನ್ನೇ ಹುಡುಕುತ್ತಿದ್ದಾರೆ,” ಎಂದು ತಿಳಿಸಿದರು.</verse>
				<verse number="37">ಅದಕ್ಕೆ ಯೇಸು, “ಅಕ್ಕಪಕ್ಕದ ಊರುಗಳಿಗೆ ಹೋಗೋಣ.</verse>
				<verse number="38">ಅಲ್ಲೂ ನಾನು ಶುಭಸಂದೇಶವನ್ನು ಸಾರಬೇಕು. ನಾನು ಬಂದಿರುವುದು ಈ ಉದ್ದೇಶಕ್ಕಾಗಿಯೇ,” ಎಂದರು.</verse>
				<verse number="39">ಅನಂತರ ಯೇಸು ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾಮಂದಿರಗಳಲ್ಲಿ ಪ್ರಬೋಧಿಸುತ್ತಾ ದೆವ್ವಗಳನ್ನು ಬಿಡಿಸುತ್ತಾ ಬಂದರು.</verse>
				<verse number="40">ಒಮ್ಮೆ ಕುಷ್ಠರೋಗಿಯೊಬ್ಬನು ಯೇಸುಸ್ವಾಮಿಯ ಬಳಿಗೆ ಬಂದು, ಮೊಣಕಾಲೂರಿ, “ತಾವು ಮನಸ್ಸುಮಾಡಿದ್ದಲ್ಲಿ ನನ್ನನ್ನು ಗುಣಮಾಡಬಲ್ಲಿರಿ,” ಎಂದು ದೈನ್ಯದಿಂದ ಬೇಡಿಕೊಂಡನು. ಯೇಸುವಿನ ಮನ ಕರಗಿತು. ಅವರು ಕೈಚಾಚಿ, ಕುಷ್ಠರೋಗಿಯನ್ನು ಮುಟ್ಟಿ,</verse>
				<verse number="41">“ಖಂಡಿತವಾಗಿ ನನಗೆ ಮನಸ್ಸಿದೆ, ನಿನಗೆ ಗುಣವಾಗಲಿ,” ಎಂದರು.</verse>
				<verse number="42">ತಕ್ಷಣ ಅವನ ಕುಷ್ಠವು ಮಾಯವಾಯಿತು. ಅವನು ಗುಣಹೊಂದಿದನು.</verse>
				<verse number="43">ಯೇಸು ಅವನಿಗೆ, “ಎಚ್ಚರಿಕೆ! ನೀನು ಗುಣಹೊಂದಿರುವುದನ್ನು ಯಾರಿಗೂ ಹೇಳಕೂಡದು. ಆದರೆ ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ. ಅನಂತರ ಮೋಶೆ ನಿಯಮಿಸಿರುವ ಶುದ್ಧೀಕರಣ ವಿಧಿಗಳನ್ನು ಅನುಸರಿಸು. ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದು ಎಚ್ಚರಿಸಿ ಅವನನ್ನು ಕೂಡಲೇ ಕಳುಹಿಸಿಬಿಟ್ಟರು.</verse>
				<verse number="44"></verse>
				<verse number="45">ಆದರೆ ಅವನು ಹೋಗಿ ಈ ಸಮಾಚಾರವನ್ನು ಎಲ್ಲೆಲ್ಲೂ ಸಾರಿದನು. ಈ ಕಾರಣ ಯೇಸು ಬಹಿರಂಗವಾಗಿ ಯಾವ ಪಟ್ಟಣದೊಳಕ್ಕೂ ಹೋಗಲು ಆಗಲಿಲ್ಲ. ಆದುದರಿಂದ ನಿರ್ಜನ ಪ್ರದೇಶಗಳಲ್ಲೇ ಇರತೊಡಗಿದರು. ಆದರೂ ಜನರು ನಾಲ್ದೆಸೆಗಳಿಂದ ಅವರು ಇದ್ದೆಡೆಗೆ ಬರುತ್ತಲೇ ಇದ್ದರು.</verse>
			</chapter>
			<chapter number="2">
				<verse number="1">ಕೆಲವು ದಿನಗಳು ಕಳೆದ ಬಳಿಕ ಯೇಸುಸ್ವಾಮಿ ಮತ್ತೊಮ್ಮೆ ಕಫೆರ್ನವುಮಿಗೆ ಬಂದರು. ಅವರು ಮನೆಯಲ್ಲಿದ್ದಾರೆಂಬ ಸುದ್ದಿ ಹಬ್ಬಿತು.</verse>
				<verse number="2">ಜನರು ಗುಂಪುಗುಂಪಾಗಿ ಅಲ್ಲಿಗೆ ಬಂದರು. ಇದರಿಂದಾಗಿ ಮನೆಯೊಳಗೆ ಮಾತ್ರವಲ್ಲ, ಹೊರಗಡೆಯೂ ಸ್ಥಳ ಸಾಲದೆ ಹೋಯಿತು. ಯೇಸು ಅಲ್ಲಿ ಸೇರಿದ್ದ ಜನಸ್ತೋಮಕ್ಕೆ ದೇವರ ವಾಕ್ಯವನ್ನು ಬೋಧಿಸತೊಡಗಿದರು.</verse>
				<verse number="3">ಆಗ ಒಬ್ಬ ಪಾರ್ಶ್ವವಾಯುರೋಗಿಯನ್ನು ನಾಲ್ವರಿಂದ ಹೊರಿಸಿಕೊಂಡು ಕೆಲವರು ಅಲ್ಲಿಗೆ ಬಂದರು.</verse>
				<verse number="4">ಜನಸಂದಣಿಯ ನಿಮಿತ್ತ ಅವನನ್ನು ಯೇಸುವಿನ ಸಮೀಪಕ್ಕೆ ಸಾಗಿಸಲು ಸಾಧ್ಯವಾಗಲಿಲ್ಲ. ಆದುದರಿಂದ ಅವರು ಯೇಸು ಇದ್ದ ಮನೆಯ ಮೇಲ್ಛಾವಣಿಯನ್ನು ತೆರೆದು, ದೊಡ್ಡ ಕಿಂಡಿಯೊಂದನ್ನು ಮಾಡಿ, ರೋಗಿಯನ್ನು ಹಾಸಿಗೆಯ ಸಮೇತ ಕೆಳಗಿಳಿಸಿದರು.</verse>
				<verse number="5">ಯೇಸು ಅವರ ವಿಶ್ವಾಸವನ್ನು ಮೆಚ್ಚಿ ಆ ಪಾರ್ಶ್ವವಾಯು ರೋಗಿಗೆ, “ಮಗು, ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.</verse>
				<verse number="6">ಆಗ, ಅಲ್ಲೇ ಕುಳಿತಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, “ಇವನೇಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ! ದೇವರೊಬ್ಬರ ಹೊರತು ಪಾಪಗಳನ್ನು ಕ್ಷಮಿಸಲು ಬೇರೆ ಯಾರಿಂದ ಸಾಧ್ಯ?” ಎಂದು ತಮ್ಮ ಮನಸ್ಸಿನಲ್ಲೇ ಆಲೋಚಿಸಿಕೊಳ್ಳುತ್ತಿದ್ದರು.</verse>
				<verse number="7"></verse>
				<verse number="8">ಅವರು ಹೀಗೆ ಯೋಚಿಸುತ್ತಿರುವುದನ್ನು ಯೇಸು ತಕ್ಷಣ ಗ್ರಹಿಸಿಕೊಂಡು ಅವರಿಗೆ, “ನೀವು ನಿಮ್ಮ ಮನಸ್ಸಿನಲ್ಲಿ ಹೀಗೆ ಆಲೋಚಿಸುತ್ತಿರುವುದು ಏಕೆ?</verse>
				<verse number="9">ಈ ಪಾರ್ಶ್ವವಾಯು ರೋಗಿಗೆ, ‘ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,’ ಎಂದು ಹೇಳುವುದು ಸುಲಭವೋ ಅಥವಾ ‘ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎನ್ನುವುದು ಸುಲಭವೋ?</verse>
				<verse number="10">ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರವುಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯನ್ನು ನೋಡಿ,</verse>
				<verse number="11">“ನಾನು ನಿನಗೆ ಆಜ್ಞಾಪಿಸುತ್ತೇನೆ; ಏಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಎಂದರು.</verse>
				<verse number="12">ಎಲ್ಲರೂ ನೋಡುತ್ತಿದ್ದ ಹಾಗೆ ಅವನು ಎದ್ದುನಿಂತನು; ತನ್ನ ಹಾಸಿಗೆಯನ್ನು ತಾನೇ ಎತ್ತಿಕೊಂಡು ಹೊರಟುಹೋದನು. ನೆರೆದಿದ್ದ ಎಲ್ಲರೂ ಆಶ್ಚರ್ಯಚಕಿತರಾಗಿ, “ಇಂಥ ಕಾರ್ಯವನ್ನು ನಾವು ನೋಡಿದ್ದೇ ಇಲ್ಲ!\, ಎಂದು ದೇವರನ್ನು ಕೊಂಡಾಡಿದರು.</verse>
				<verse number="13">ಯೇಸುಸ್ವಾಮಿ ಪುನಃ ಗಲಿಲೇಯ ಸರೋವರದ ತೀರಕ್ಕೆ ಹೋದರು. ಜನರ ಗುಂಪು ಅವರನ್ನು ಸುತ್ತುಗಟ್ಟಿತು. ಯೇಸು ಅವರಿಗೆ ಪ್ರಬೋಧಿಸಿದರು.</verse>
				<verse number="14">ಅಲ್ಲಿಂದ ಹೊರಟುಹೋಗುತ್ತಿರುವಾಗ ಅಲ್ಫಾಯನ ಮಗನಾದ ಲೇವಿಯು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿರುವುದನ್ನು ಯೇಸು ಕಂಡರು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಕರೆದರು. ಲೇವಿ ಎದ್ದು ಅವರನ್ನು ಹಿಂಬಾಲಿಸಿದನು.</verse>
				<verse number="15">ತದನಂತರ ಯೇಸು ಲೇವಿಯ ಮನೆಯಲ್ಲಿ ಊಟಕ್ಕೆ ಕುಳಿತಿದ್ದರು. ಬಹುಮಂದಿ ಸುಂಕದವರು, ಪಾಪಿಷ್ಠರು, ಅಲ್ಲಿಗೆ ಬಂದರು. ಇವರೆಲ್ಲರೂ ಯೇಸು ಮತ್ತು ಅವರ ಶಿಷ್ಯರ ಪಂಕ್ತಿಯಲ್ಲೇ ಊಟಕ್ಕೆ ಕುಳಿತರು. ಇಂಥವರು ಬಹುಮಂದಿ ಯೇಸುವನ್ನು ಹಿಂಬಾಲಿಸುತ್ತಿದ್ದರು.</verse>
				<verse number="16">ಫರಿಸಾಯ ಪಂಥಕ್ಕೆ ಸೇರಿದ್ದ ಧರ್ಮಶಾಸ್ತ್ರಿಗಳಲ್ಲಿ ಕೆಲವರು, ಸುಂಕದವರ ಮತ್ತು ಇತರ ಪಾಪಿಗಳ ಪಂಕ್ತಿಯಲ್ಲಿ ಯೇಸು ಊಟಮಾಡುವುದನ್ನು ಕಂಡು, “ಈತನು ಇಂಥಾ ಬಹಿಷ್ಕೃತ ಜನರ ಜೊತೆಯಲ್ಲಿ ಊಟಮಾಡುವುದೇಕೆ?” ಎಂದು ಯೇಸುವಿನ ಶಿಷ್ಯರೊಡನೆ ಆಕ್ಷೇಪಿಸಿದರು.</verse>
				<verse number="17">ಇದನ್ನು ಕೇಳಿಸಿಕೊಂಡ ಯೇಸು ಅವರಿಗೆ, “ವೈದ್ಯನ ಅವಶ್ಯಕತೆ ಇರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ, ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.</verse>
				<verse number="18">ಯೊವಾನ್ನನ ಶಿಷ್ಯರು ಮತ್ತು ಫರಿಸಾಯರು ಉಪವಾಸವ್ರತಗಳನ್ನು ಕೈಗೊಂಡಿದ್ದ ಒಂದು ಸಂದರ್ಭದಲ್ಲಿ ಕೆಲವು ಜನರು ಯೇಸುಸ್ವಾಮಿಯ ಬಳಿಗೆ ಬಂದರು. ಅವರು, “ಯೊವಾನ್ನನ ಶಿಷ್ಯರು ಮತ್ತು ಫರಿಸಾಯರ ಶಿಷ್ಯರು ಉಪವಾಸವ್ರತವನ್ನು ಕೈಗೊಳ್ಳುತ್ತಾರೆ, ಆದರೆ ನಿನ್ನ ಶಿಷ್ಯರೇಕೆ ಹಾಗೆ ಮಾಡುವುದಿಲ್ಲ” ಎಂದು ಕೇಳಿದರು.</verse>
				<verse number="19">ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿ ಇರುವಾಗ ಅವನ ಆಪ್ತರು ಉಪವಾಸ ಮಾಡುವುದುಂಟೆ? ಖಂಡಿತವಾಗಿಯೂ ಇಲ್ಲ. ಅವನು ತಮ್ಮ ಜೊತೆಯಲ್ಲಿರುವಷ್ಟು ಕಾಲ ಅವರು ಉಪವಾಸ ಮಾಡಲಾಗದು.</verse>
				<verse number="20">ಮದುವಣಿಗನು ಅವರಿಂದ ಅಗಲಬೇಕಾದ ಕಾಲ ಬರುವುದು. ಆಗ ಅವರು ಉಪವಾಸ ಮಾಡುವರು.</verse>
				<verse number="21">“ಹಳೆಯ ಅಂಗಿಗೆ ಹೊಸ ಬಟ್ಟೆಯ ತೇಪೆಯನ್ನು ಯಾರೂ ಹಾಕುವುದಿಲ್ಲ. ಹಾಕಿದಲ್ಲಿ, ಹೊಸ ತೇಪೆಯು ಹಳೆಯ ಅಂಗಿಯನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.</verse>
				<verse number="22">ಅಂತೆಯೇ ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ಯಾರೂ ತುಂಬಿಡುವುದಿಲ್ಲ. ತುಂಬಿಟ್ಟರೆ, ಅದರಿಂದ ಬುದ್ದಲಿಗಳು ಬಿರಿಯುತ್ತವೆ. ಮದ್ಯವು ಮತ್ತು ಬುದ್ದಲಿಗಳು ಎರಡೂ ನಷ್ಟವಾಗುತ್ತವೆ. ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು,” ಎಂದರು.</verse>
				<verse number="23">ಅದೊಂದು ಸಬ್ಬತ್‍ದಿನ. ಯೇಸುಸ್ವಾಮಿ ಗೋದಿಯ ಹೊಲಗಳಲ್ಲಿ ಹಾದುಹೋಗುತ್ತಿದ್ದರು. ಜೊತೆಯಲ್ಲಿದ್ದ ಅವರ ಶಿಷ್ಯರು ತೆನೆಗಳನ್ನು ಕೀಳಲಾರಂಭಿಸಿದರು.</verse>
				<verse number="24">ಇದನ್ನು ಕಂಡ ಫರಿಸಾಯರು,, “ನೋಡು, ಸಬ್ಬತ್‍ದಿನದಲ್ಲಿ ನಿಷಿದ್ಧವಾದುದನ್ನು ನಿನ್ನ ಶಿಷ್ಯರು ಮಾಡುತ್ತಿದ್ದಾರೆ, ಇದು ಸರಿಯೇ?” ಎಂದು ಯೇಸುವನ್ನು ಪ್ರಶ್ನಿಸಿದರು.</verse>
				<verse number="25">ಅದಕ್ಕೆ ಯೇಸು, “ಹಿಂದೆ, ಅರಸ ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದು, ಉಣ್ಣಲು ಏನೂ ಇಲ್ಲದಿದ್ದಾಗ ಏನು ಮಾಡಿದರೆಂಬುದನ್ನು ನೀವು ಓದಿರಬೇಕಲ್ಲವೇ?</verse>
				<verse number="26">ಪ್ರಧಾನಯಾಜಕ ಅಬಿಯಾತರನ ಕಾಲದಲ್ಲಿ ಅವನು ದೇವಮಂದಿರದೊಳಕ್ಕೆ ಹೋಗಿ, ಯಾಜಕನ ಹೊರತು ಬೇರೆ ಯಾರೂ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತಿಂದ; ಅಲ್ಲದೆ, ತನ್ನ ಸಂಗಡ ಇದ್ದವರಿಗೂ ಕೊಟ್ಟನಲ್ಲವೇ?’ ಎಂದು ಅವರನ್ನು ಕೇಳಿದರು.</verse>
				<verse number="27">ಬಳಿಕ ಯೇಸು ಅವರಿಗೆ, “ಸಬ್ಬತ್‍ದಿನ ಇರುವುದು ಮನುಷ್ಯನಿಗಾಗಿ ಹೊರತು ಮನುಷ್ಯ ಇರುವುದು ಸಬ್ಬತ್ತಿಗಾಗಿ ಅಲ್ಲ.</verse>
				<verse number="28">ಆದುದರಿಂದ ನರಪುತ್ರನು ಸಬ್ಬತ್ತಿಗೂ ಒಡೆಯ,” ಎಂದರು.</verse>
			</chapter>
			<chapter number="3">
				<verse number="1">ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಪುನಃ ಹೋದರು. ಅಲ್ಲಿ ಒಬ್ಬ ಬತ್ತಿದ ಕೈಯುಳ್ಳವನು ಇದ್ದನು.</verse>
				<verse number="2">ಅವನನ್ನು ಸಬ್ಬತ್‍ದಿನದಲ್ಲಿ ಗುಣಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪುಹೊರಿಸಬಹುದೆಂಬ ಉದ್ದೇಶದಿಂದ ಕೆಲವರು ಹೊಂಚುಹಾಕುತ್ತಿದ್ದರು.</verse>
				<verse number="3">ಯೇಸು ಬತ್ತಿದ ಕೈಯುಳ್ಳವನಿಗೆ, “ಎದ್ದು ಮುಂದಕ್ಕೆ ಬಾ,” ಎಂದರು. ಬಳಿಕ ಅಲ್ಲಿದ್ದವರನ್ನು ಉದ್ದೇಶಿಸಿ,</verse>
				<verse number="4">“ಸಬ್ಬತ್‍ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ ಹೇಳಿ,” ಎಂದು ಕೇಳಲು ಅವರು ಮಾತೇ ಎತ್ತಲಿಲ್ಲ.</verse>
				<verse number="5">ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ದಿಟ್ಟಿಸಿ, ಅವರ ಹೃದಯ ಕಲ್ಲಾಗಿರುವುದನ್ನು ಕಂಡು, ಮನನೊಂದು, ಬತ್ತಿದ ಕೈಯುಳ್ಳವನಿಗೆ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದನು, ಅದು ಸಂಪೂರ್ಣವಾಗಿ ಸ್ವಸ್ಥವಾಯಿತು.</verse>
				<verse number="6">ಫರಿಸಾಯರು ಅಲ್ಲಿಂದ ಹೊರಗೆಹೋದರು. ಕೂಡಲೇ ಹೆರೋದಿಯರೊಡನೆ ಸೇರಿಕೊಂಡು ಯೇಸುವನ್ನು ಕೊಲೆಮಾಡಲು ಒಳಸಂಚು ಹೂಡಿದರು.</verse>
				<verse number="7">ಯೇಸುಸ್ವಾಮಿ ತಮ್ಮ ಶಿಷ್ಯರ ಜೊತೆಯಲ್ಲಿ ಗಲಿಲೇಯ ಸರೋವರದ ತೀರಕ್ಕೆ ಹೊರಟುಹೋದರು. ಸಾವಿರಾರು ಜನರು ಅವರನ್ನು ಹಿಂಬಾಲಿಸಿದರು.</verse>
				<verse number="8">ಈ ಜನರು ಯೇಸು ಮಾಡುತ್ತಿದ್ದ ಮಹತ್ಕಾರ್ಯಗಳ ಸಮಾಚಾರವನ್ನು ಕೇಳಿ, ಗಲಿಲೇಯ ಪ್ರಾಂತ್ಯದಿಂದ, ಜುದೇಯ ಪ್ರಾಂತ್ಯದಿಂದ, ಜೆರುಸಲೇಮ್ ನಗರದಿಂದ, ಇದು ಮೇಯ ಪ್ರಾಂತ್ಯದಿಂದ ಜೋರ್ಡನ್ ನದಿಯ ಪೂರ್ವಪ್ರದೇಶ ಹಾಗೂ ಟೈರ್-ಸಿದೋನ್ ಪಟ್ಟಣಗಳ ಸುತ್ತಮುತ್ತಲಿಂದ ಬಂದಿದ್ದರು.</verse>
				<verse number="9">ಜನಸಂದಣಿ ಅಧಿಕವಾಗುತ್ತಿದ್ದುದರಿಂದ ಅವರು ತಮ್ಮ ಮೈಮೇಲೆ ಬಿದ್ದಾರೆಂದು ಯೇಸು, ತಮಗೆ ಒಂದು ದೋಣಿಯನ್ನು ಸಿದ್ಧವಾಗಿಡಲು ಶಿಷ್ಯರಿಗೆ ಹೇಳಿದರು.</verse>
				<verse number="10">ಯೇಸು ಅನೇಕರನ್ನು ಗುಣಪಡಿಸಿದ್ದರಿಂದ ರೋಗಿಗಳೆಲ್ಲರೂ ಅವರನ್ನು ಮುಟ್ಟಬೇಕೆಂದು ಮುನ್ನುಗ್ಗಿ ಮೇಲೆ ಮೇಲೆ ಬೀಳುತ್ತಿದ್ದರು.</verse>
				<verse number="11">ದೆವ್ವಗಳು ಸಹ ಅವರನ್ನು ಕಂಡಾಗಲೆಲ್ಲಾ ಅವರ ಪಾದಕ್ಕೆರಗಿ, “ನೀವು ದೇವರ ಪುತ್ರ\, ಎಂದು ಕಿರುಚುತ್ತಿದ್ದವು.</verse>
				<verse number="12">ಆದರೆ ಯೇಸು, ತಾವು ಯಾರೆಂಬುದನ್ನು ಪ್ರಕಟಿಸಬಾರದೆಂದು ಅವುಗಳಿಗೆ ಕಟ್ಟಪ್ಪಣೆ ಮಾಡುತ್ತಿದ್ದರು.</verse>
				<verse number="13">ಅನಂತರ ಯೇಸುಸ್ವಾಮಿ ಬೆಟ್ಟವನ್ನೇರಿ, ತಮಗೆ ಒಪ್ಪಿಗೆಯಾದವರನ್ನು ಕರೆದರು. ಅವರು ಹತ್ತಿರಕ್ಕೆ ಬಂದರು. ಯೇಸು ಹನ್ನೆರಡು ಮಂದಿಯನ್ನು ಆಯ್ದುಕೊಂಡು, ‘ಪ್ರೇಷಿತರು’ ಎಂದು ಅವರಿಗೆ ಹೆಸರಿಟ್ಟರು.</verse>
				<verse number="14">“ನನ್ನ ಜೊತೆಯಲ್ಲಿ ಇರಲು ನಿಮ್ಮನ್ನು ಆರಿಸಿಕೊಂಡಿದ್ದೇನೆ. ಶುಭಸಂದೇಶವನ್ನು ಸಾರಲು ನಿಮ್ಮನ್ನು ಕಳುಹಿಸುತ್ತೇನೆ.</verse>
				<verse number="15">ದೆವ್ವಗಳನ್ನು ಬಿಡಿಸುವ ಅಧಿಕಾರವನ್ನು ನಿಮಗೆ ಕೊಡುತ್ತೇನೆ\, ಎಂದು ಅವರಿಗೆ ಹೇಳಿದರು. ಹೀಗೆ ನೇಮಕಗೊಂಡ ಹನ್ನೆರಡು ಮಂದಿ ಯಾರೆಂದರೆ:</verse>
				<verse number="16">ಸಿಮೋನ (ಯೇಸು ಈತನಿಗೆ ‘ಪೇತ್ರ’ ಎಂದು ಹೆಸರಿಟ್ಟರು).</verse>
				<verse number="17">ಜೆಬೆದಾಯನ ಮಗ ಯಕೋಬ ಮತ್ತು ಅವನ ಸಹೋದರ ಯೊವಾನ್ನ (ಯೇಸು ಇವರಿಬ್ಬರಿಗೆ ‘ಬೊವನೆರ್ಗೆಸ್’ ಎಂದರೆ ‘ಸಿಡಿಲಮರಿಗಳು’ ಎಂಬ ಹೆಸರನ್ನಿಟ್ಟರು).</verse>
				<verse number="18">ಅಂದ್ರೆಯ, ಫಿಲಿಪ್ಪ, ಬಾರ್ತಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗ ಯಕೋಬ, ತದ್ದಾಯ, ದೇಶಾಭಿಮಾನಿ ಆದ ಸಿಮೋನ ಮತ್ತು</verse>
				<verse number="19">ಮುಂದೆ ಗುರುದ್ರೋಹಿಯಾಗಲಿದ್ದ ಇಸ್ಕರಿಯೋತ.</verse>
				<verse number="20">ಯೇಸುಸ್ವಾಮಿ ಮನೆಗೆ ಹೋದಾಗ ಜನರು ಮರಳಿ ಗುಂಪುಗುಂಪಾಗಿ ಬಂದರು. ಯೇಸುವಿಗೂ ಶಿಷ್ಯರಿಗೂ ಊಟಮಾಡಲು ಕೂಡ ಬಿಡುವಿಲ್ಲದೆ ಹೋಯಿತು.</verse>
				<verse number="21">:ಈತನಿಗೆ ಹುಚ್ಚು ಹಿಡಿದಿದೆ,” ಎಂದು ಜನರು ಮಾತಾಡಿಕೊಳ್ಳುತ್ತಿದ್ದರು. ಆದ್ದರಿಂದ ಯೇಸುವಿನ ಬಂಧುಗಳು ಯೇಸುವನ್ನು ಹಿಡಿದುತರಲು ಹೊರಟರು.</verse>
				<verse number="22">ಇದಲ್ಲದೆ, ಜೆರುಸಲೇಮಿನಿಂದ ಬಂದಿದ್ದ ಧರ್ಮಶಾಸ್ತ್ರಿಗಳು, “ಇವನನ್ನು ಬೆಲ್ಜೆಬೂಲನು ಹಿಡಿದಿದ್ದಾನೆ; ದೆವ್ವಗಳ ಒಡೆಯನ ಶಕ್ತಿಯಿಂದಲೇ ಇವನು ದೆವ್ವಬಿಡಿಸುತ್ತಾನೆ,” ಎನ್ನುತ್ತಿದ್ದರು.</verse>
				<verse number="23">ಆಗ ಯೇಸು ಅವರನ್ನು ತಮ್ಮ ಹತ್ತಿರಕ್ಕೆ ಕರೆದು ಸಾಮತಿಗಳ ಮೂಲಕ ಮಾತನಾಡತೊಡಗಿದರು: “ಸೈತಾನನು ಸೈತಾನನನ್ನು ಹೊರದೂಡುವುದು ಹೇಗೆ ತಾನೇ ಸಾಧ್ಯ?</verse>
				<verse number="24">ಒಂದು ರಾಜ್ಯದ ಪ್ರಜೆಗಳು ತಮ್ಮತಮ್ಮೊಳಗೆ ಕಚ್ಚಾಡುವುದಾದರೆ ಆ ರಾಜ್ಯ ಉಳಿಯದು.</verse>
				<verse number="25">ಒಂದು ಕುಟುಂಬದ ಸದಸ್ಯರು ತಮ್ಮತಮ್ಮೊಳಗೆ ಕಚ್ಚಾಡುವುದಾದರೆ ಆ ಕುಟುಂಬ ಬಾಳದು.</verse>
				<verse number="26">ಅದರಂತೆಯೇ ಸೈತಾನನ ಪಕ್ಷದವರು ಪರಸ್ಪರ ವಿರೋಧಿಗಳಾದರೆ ಅವನ ರಾಜ್ಯ ಉಳಿಯದು; ಅದು ಅಳಿದುಹೋಗುವುದು.</verse>
				<verse number="27">ಒಬ್ಬನು ಬಲಿಷ್ಠನ ಮನೆಯನ್ನು ನುಗ್ಗಿ ಅವನನ್ನು ಕಟ್ಟಿಹಾಕದೆ ಅವನ ಸೊತ್ತನ್ನು ಸೂರೆಮಾಡಲಾಗದು. ಮೊದಲು ಅವನನ್ನು ಕಟ್ಟಬೇಕು. ಬಳಿಕ ಅವನ ಮನೆಯನ್ನು ಕೊಳ್ಳೆಹೊಡೆಯಬೇಕು.</verse>
				<verse number="28">ನಿಶ್ಚಯವಾಗಿ ನಿಮಗೆ ಹೇಳುತ್ತೇನೆ: ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ಆಡುವ ಎಲ್ಲಾ ದೇವದೂಷಣೆಗಳಿಗೂ ಕ್ಷಮೆ ದೊರಕಬಹುದು.</verse>
				<verse number="29">ಆದರೆ ಪವಿತ್ರಾತ್ಮ ಅವರನ್ನು ದೂಷಿಸುವವನಿಗೆ ಮಾತ್ರ ಕ್ಷಮೆ ದೊರಕದು. ಅಂಥವನ ಪಾಪ ಶಾಶ್ವತವಾದುದು,” ಎಂದರು.</verse>
				<verse number="30">(ದೆವ್ವ ಹಿಡಿದಿದೆ ಎಂದು ತಮ್ಮನ್ನು ಕೆಲವರು ನಿಂದಿಸುತ್ತಿದ್ದುದರಿಂದ ಯೇಸು ಹೀಗೆ ಹೇಳಿದರು).</verse>
				<verse number="31">ಯೇಸುಸ್ವಾಮಿಯ ತಾಯಿ ಮತ್ತು ಸಹೋದರರು ಅಲ್ಲಿಗೆ ಬಂದರು. ಒಳಗೆ ಜನರು ಯೇಸುವಿನ ಸುತ್ತಲೂ ಗುಂಪಾಗಿ ಕುಳಿತಿದ್ದರು. ಆದುದರಿಂದ ಅವರು ಹೊರಗೇ ನಿಂತು, ಯೇಸುವಿಗೆ ಬರಬೇಕೆಂದು ಹೇಳಿಕಳುಹಿಸಿದರು.</verse>
				<verse number="32">“ನಿಮ್ಮ ತಾಯಿಯೂ ಸಹೋದರರೂ ಹೊರಗೆ ನಿಮಗಾಗಿ ಕಾದಿದ್ದಾರೆ,” ಎಂದು ಯೇಸುವಿಗೆ ತಿಳಿಸಿದರು.</verse>
				<verse number="33">ಅದಕ್ಕೆ ಯೇಸು, “ನನಗೆ ತಾಯಿ ಯಾರು?, ಸಹೋದರರು ಯಾರು?” ಎನ್ನುತ್ತಾ ತಮ್ಮ ಸುತ್ತಲೂ ಕುಳಿತಿದ್ದವರ ಮೇಲೆ ದೃಷ್ಟಿಹರಿಸಿ,</verse>
				<verse number="34">“ಇಗೋ, ನನ್ನ ತಾಯಿ! ಇಗೋ ನನ್ನ ಸಹೋದರರು!</verse>
				<verse number="35">ದೈವೇಚ್ಛೆಯನ್ನು ಯಾರು ನೆರವೇರಿಸುತ್ತಾರೋ ಅವರೇ ನನಗೆ ಸಹೋದರ, ಸಹೋದರಿ, ತಾಯಿ,” ಎಂದರು.</verse>
			</chapter>
			<chapter number="4">
				<verse number="1">ಯೇಸುಸ್ವಾಮಿ ಗಲಿಲೇಯ ಸರೋವರದ ತೀರದಲ್ಲಿ ಮತ್ತೆ ಬೋಧಿಸಲಾರಂಭಿಸಿದರು. ಜನರು ಕಿಕ್ಕಿರಿದು ಸುತ್ತಲೂ ನೆರೆದುಬಂದಿದ್ದರು. ಆದುದರಿಂದ ಅವರು ಸರೋವರದಲ್ಲಿದ್ದ ದೋಣಿಯೊಂದನ್ನು ಹತ್ತಿ ಕುಳಿತರು.</verse>
				<verse number="2">ಜನರು ದಡದಲ್ಲೇ ಉಳಿದರು. ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಸಾಮತಿಗಳ ಮೂಲಕ ಬೋಧಿಸುತ್ತಾ ಹೀಗೆಂದರು:</verse>
				<verse number="3">“ಕೇಳಿ, ಒಬ್ಬ ರೈತ ಬಿತ್ತುವುದಕ್ಕೆ ಹೊರಟ.</verse>
				<verse number="4">ಬಿತ್ತನೆಮಾಡುತ್ತಾ ಇದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಬಿದ್ದುದೇ ಹಕ್ಕಿಗಳು ಬಂದು ಅವುಗಳನ್ನು ತಿಂದುಬಿಟ್ಟವು.</verse>
				<verse number="5">ಬೇರೆ ಕೆಲವು ಬೀಜಗಳು ಹೆಚ್ಚು ಮಣ್ಣಿಲ್ಲದ ಕಲ್ಲುನೆಲದ ಮೇಲೆ ಬಿದ್ದವು. ಅಲ್ಲಿ ಮಣ್ಣು ಬಹಳ ತೆಳ್ಳಗಿದ್ದುದರಿಂದ ಅವು ಬೇಗನೆ ಮೊಳೆತವು;</verse>
				<verse number="6">ಬಿಸಿಲೇರಿದಾಗ ಬಾಡಿದವು; ಆಳವಾಗಿ ಬೇರೂರಲು ಆಗದ ಕಾರಣ ಅವು ಒಣಗಿಹೋದವು.</verse>
				<verse number="7">ಇನ್ನು ಕೆಲವು ಬೀಜಗಳು ಮುಳ್ಳುಪೊದೆಗಳ ನಡುವೆ ಬಿದ್ದವು. ಮುಳ್ಳುಪೊದೆಗಳು ಸಸ್ಯಗಳ ಸಮೇತ ಅವುಗಳನ್ನು ಅದುಮಿಬಿಟ್ಟವು. ಆದುದರಿಂದ ಅವು ಫಲಕೊಡಲಿಲ್ಲ.</verse>
				<verse number="8">ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಮೊಳೆತು, ಬೆಳೆದು ತೆನೆಬಿಟ್ಟವು. ಅವುಗಳಲ್ಲಿ ಕೆಲವು ಮೂವತ್ತರಷ್ಟು, ಕೆಲವು ಅರವತ್ತರಷ್ಟು ಮತ್ತೆ ಕೆಲವು ನೂರರಷ್ಟು ಫಸಲನ್ನು ಕೊಟ್ಟವು.”</verse>
				<verse number="9">ಈ ಸಾಮತಿಯನ್ನು ಹೇಳಿದ ಬಳಿಕ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದರು.</verse>
				<verse number="10">ಈ ಉಪದೇಶವನ್ನು ಕೇಳಿದವರಲ್ಲಿ ಕೆಲವರು, ಯೇಸುಸ್ವಾಮಿ ಒಬ್ಬರೇ ಇದ್ದಾಗ, ಹನ್ನೆರಡುಮಂದಿ ಶಿಷ್ಯರೊಡನೆ ಬಂದು, ಅವರು ಹೇಳಿದ ಸಾಮತಿಗಳನ್ನು ವಿವರಿಸಬೇಕೆಂದು ಕೇಳಿಕೊಂಡರು.</verse>
				<verse number="11">ಅದಕ್ಕೆ ಯೇಸು, “ದೇವರ ಸಾಮ್ರಾಜ್ಯದ ರಹಸ್ಯವನ್ನು ನಿಮಗೆ ತಿಳಿಸಲಾಗಿದೆ. ಮಿಕ್ಕವರಿಗಾದರೋ ಅದೆಲ್ಲವೂ ಸಾಮತಿಗಳ ರೂಪದಲ್ಲಿ ಮರೆಯಾಗಿದೆ. ಏಕೆಂದರೆ,</verse>
				<verse number="12">‘ಕಣ್ಣಾರೆ ನೋಡಿಯೂ ಅವರು ಕಾಣರು; ಕಿವಿಯಾರೆ ಕೇಳಿಯೂ ಅವರು ಗ್ರಹಿಸರು. ಕಂಡು ಗ್ರಹಿಸಿದರೆ ಅವರು ದೇವರತ್ತ ತಿರುಗಿಯಾರು; ಪಾಪಕ್ಷಮೆ ಹೊಂದಿಯಾರು’,” ಎಂದರು.</verse>
				<verse number="13">ಅನಂತರ ಯೇಸುಸ್ವಾಮಿ ಅವರಿಗೆ, “ಈ ಸಾಮತಿಯನ್ನು ನೀವು ಅರ್ಥಮಾಡಿಕೊಳ್ಳಲಿಲ್ಲವೇ? ಹಾಗಾದರೆ ಬೇರೆಲ್ಲಾ ಸಾಮತಿಗಳನ್ನು ಹೇಗೆ ಅರ್ಥಮಾಡಿಕೊಳ್ಳುವಿರಿ?</verse>
				<verse number="14">ಈ ಸಾಮತಿಯಲ್ಲಿ, ಬಿತ್ತುವವನು ‘ದೇವರ ಸಂದೇಶ’ ಎಂಬ ಬೀಜವನ್ನು ಬಿತ್ತುತ್ತಾನೆ.</verse>
				<verse number="15">ಕೆಲವರು ದೇವರ ಸಂದೇಶವನ್ನು ಕೇಳುತ್ತಾರೆ; ಸೈತಾನನು ತಕ್ಷಣವೇ ಬಂದು ಆ ಸಂದೇಶವನ್ನು ತೆಗೆದುಬಿಡುತ್ತಾನೆ. ಕಾಲ್ದಾರಿಯಲ್ಲಿ ಬಿದ್ದ ಬೀಜಕ್ಕೆ ಹೋಲಿಕೆಯಾಗಿರುವವರು ಇವರೇ.</verse>
				<verse number="16">ಇನ್ನೂ ಕೆಲವರು ದೇವರ ಸಂದೇಶವನ್ನು ಕೇಳಿದ ಕೂಡಲೆ ಅದನ್ನು ಸಂತಸದಿಂದ ಸ್ವೀಕರಿಸುತ್ತಾರೆ. ಆದರೆ ಅವರಲ್ಲಿ ಅದು ಆಳವಾಗಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಉಳಿಯುತ್ತದೆ.</verse>
				<verse number="17">ದೇವರ ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿ ಬೀಳುತ್ತಾರೆ. ಇವರೇ ಕಲ್ಲುನೆಲದ ಮೇಲೆ ಬಿದ್ದ ಬೀಜಕ್ಕೆ ಸಮಾನರಾದವರು.</verse>
				<verse number="18">ಇನ್ನೂ ಕೆಲವರು ದೇವರ ಸಂದೇಶವನ್ನು ಕೇಳುತ್ತಾರೆ. ಆದರೆ ಅವರೊಳಗೆ ಇರುವ ಪ್ರಾಪಂಚಿಕ ಚಿಂತನೆಗಳೂ ಐಶ್ವರ್ಯದ ವ್ಯಾಮೋಹಗಳೂ ಇನ್ನಿತರ ಅಭಿಲಾಷೆಗಳೂ ದೇವರ ಸಂದೇಶವನ್ನು ಅದುಮಿ, ಅದು ಫಲಬಿಡದಂತೆ ಮಾಡುತ್ತವೆ. ಇವರೇ ಮುಳ್ಳುಪೊದೆಗಳ ನಡುವೆ ಬಿದ್ದ ಬೀಜಕ್ಕೆ ಅನುರೂಪ ಆದವರು.</verse>
				<verse number="19"></verse>
				<verse number="20">ಮತ್ತೆ ಕೆಲವರಾದರೋ ದೇವರ ಸಂದೇಶವನ್ನು ಕೇಳಿ ಅದನ್ನು ಸ್ವಾಗತಿಸುತ್ತಾರೆ. ಅಂಥವರಲ್ಲಿ ಕೆಲವರು ಮೂವತ್ತರಷ್ಟು, ಕೆಲವರು ಅರವತ್ತರಷ್ಟು, ಇನ್ನೂ ಕೆಲವರು ನೂರರಷ್ಟು ಫಲಕೊಡುತ್ತಾರೆ. ಇವರೇ ಹದವಾದ ಭೂಮಿಯಲ್ಲಿ ಬಿದ್ದ ಬೀಜಕ್ಕೆ ಸಮಾನರು,” ಎಂದರು.</verse>
				<verse number="21">ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ಯಾರಾದರೂ ಉರಿಯುವ ದೀಪವನ್ನು ತಂದು ಬಟ್ಟಲ ಒಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ನಿಶ್ಚಯವಾಗಿಯೂ ಇಲ್ಲ. ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ.</verse>
				<verse number="22">ಬೆಳಕಿಗೆ ಬಾರದ ಮುಚ್ಚುಮರೆಯಿಲ್ಲ, ರಟ್ಟಾಗದ ಗುಟ್ಟಿಲ್ಲ.</verse>
				<verse number="23">ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ.</verse>
				<verse number="24">“ನೀವು ಕೇಳುವುದನ್ನು ಎಚ್ಚರಿಕೆಯಿಂದ ಗಮನಿಸಿರಿ; ಇತರರಿಗೆ ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು; ಇನ್ನೂ ಅಧಿಕವಾಗಿ ಕೊಡುವರು.</verse>
				<verse number="25">ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ,” ಎಂದರು.</verse>
				<verse number="26">ಯೇಸುಸ್ವಾಮಿ ಇನ್ನೊಂದು ಸಾಮತಿಯನ್ನು ಹೇಳಿದರು: “ದೇವರ ಸಾಮ್ರಾಜ್ಯವು ರೈತನೊಬ್ಬನು ತನ್ನ ಹೊಲದಲ್ಲಿ ಮಾಡಿದ ಬಿತ್ತನೆಗೆ ಹೋಲಿಕೆಯಾಗಿದೆ.</verse>
				<verse number="27">ಬಿತ್ತನೆಯಾದ ಬಳಿಕ ಅವನು ರಾತ್ರಿಯಲ್ಲಿ ಮಲಗಿರಲಿ, ಹಗಲಲ್ಲಿ ಎದ್ದಿರಲಿ, ಅವನಿಗೆ ಹೇಗೆಂದು ತಿಳಿಯದೆಯೇ ಆ ಬೀಜವು ಮೊಳೆತು ಬೆಳೆಯುತ್ತಿರುತ್ತದೆ.</verse>
				<verse number="28">ಭೂಮಿ ಮೊದಲು ಸಸಿಯನ್ನೂ ಅನಂತರ ಹೊಡೆಯನ್ನೂ ತರುವಾಯ ತೆನೆತುಂಬ ಕಾಳನ್ನೂ ತನ್ನಷ್ಟಕ್ಕೆ ತಾನೇ ಉತ್ಪತ್ತಿಮಾಡುತ್ತದೆ.</verse>
				<verse number="29">ಬೆಳೆಯು ಮಾಗಿದಾಗ ಸುಗ್ಗಿಯು ಬಂತೆಂದು ವ್ಯವಸಾಯಗಾರನು ಕುಡುಗೋಲನ್ನು ಬಳಸುತ್ತಾನೆ,” ಎಂದರು.</verse>
				<verse number="30">ಯೇಸುಸ್ವಾಮಿ ತಮ್ಮ ಉಪದೇಶವನ್ನು ಮುಂದುವರಿಸಿ, “ದೇವರ ಸಾಮ್ರಾಜ್ಯವನ್ನು ಇನ್ನು ಯಾವುದಕ್ಕೆ ಹೋಲಿಸೋಣ? ಅದಕ್ಕಾಗಿ ಯಾವ ಸಾಮತಿಯನ್ನು ಉಪಯೋಗಿಸೋಣ?</verse>
				<verse number="31">ಭೂಮಿಯಲ್ಲಿರುವ ಕಾಳುಗಳಲ್ಲಿ ಅತಿ ಚಿಕ್ಕದಾಗಿರುವ ಸಾಸಿವೆಕಾಳಿಗೂ ಅದನ್ನು ಹೋಲಿಸಬಹುದು.</verse>
				<verse number="32">ಸಾಸಿವೆಕಾಳು ಚಿಕ್ಕದಾಗಿದ್ದರೂ ಬಿತ್ತನೆಯ ತರುವಾಯ ಮೊಳೆತು ಎಲ್ಲಾ ಕಾಯಿಪಲ್ಯದ ಸಸ್ಯಗಳಿಗಿಂತಲೂ ದೊಡ್ಡದಾಗಿ ಬೆಳೆಯುತ್ತದೆ. ಹಕ್ಕಿಗಳು ಕೂಡ ಬಂದು ಅದರ ನೆರಳಿನಲ್ಲಿ ಗೂಡುಕಟ್ಟಿ ವಾಸಿಸುವಷ್ಟು ದೊಡ್ಡದಾದ ರೆಂಬೆಗಳನ್ನು ಅದು ತಳೆಯುತ್ತದೆ,” ಎಂದರು.</verse>
				<verse number="33">ಯೇಸುಸ್ವಾಮಿ ಈ ಬಗೆಯ ಸಾಮತಿಗಳನ್ನು ಉಪಯೋಗಿಸಿ ಜನರಿಗೆ ದೇವರ ಸಂದೇಶವನ್ನು ಅವರವರ ತಿಳುವಳಿಕೆಗೆ ತಕ್ಕಂತೆ ಉಪದೇಶಿಸುತ್ತಿದ್ದರು. ಸಾಮತಿಗಳನ್ನು ಉಪಯೋಗಿಸದೆ ಅವರು ಬೋಧಿಸುತ್ತಿರಲಿಲ್ಲ.</verse>
				<verse number="34">ಆದರೆ ತಮ್ಮ ಆಪ್ತಶಿಷ್ಯರೊಡನೆ ಪ್ರತ್ಯೇಕವಾಗಿದ್ದಾಗ ಅವರಿಗೆ ಎಲ್ಲವನ್ನು ವಿವರಿಸಿ ಹೇಳುತ್ತಿದ್ದರು.</verse>
				<verse number="35">ಆ ದಿನ ಸಾಯಂಕಾಲ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಸರೋವರದ ಆಚೆದಡಕ್ಕೆ ಹೋಗೋಣ,” ಎಂದರು.</verse>
				<verse number="36">ಆಗ ಶಿಷ್ಯರು ಜನರ ಗುಂಪನ್ನು ಬಿಟ್ಟು ದೋಣಿಯಲ್ಲಿ ಕುಳಿತಿದ್ದ ಯೇಸುವನ್ನು ಹಾಗೆಯೇ ತಮ್ಮ ಜೊತೆಯಲ್ಲಿ ಕರೆದುಕೊಂಡು ಹೊರಟರು.</verse>
				<verse number="37">ಆ ದೋಣಿಯ ಸಂಗಡ ಬೇರೆ ದೋಣಿಗಳು ಇದ್ದವು. ಸ್ವಲ್ಪ ಮುಂದೆ ಹೋಗುವಷ್ಟರಲ್ಲೇ ದೊಡ್ಡ ಬಿರುಗಾಳಿ ಎದ್ದಿತು. ಅಲೆಗಳು ದೋಣಿಗೆ ಅಪ್ಪಳಿಸತೊಡಗಿದವು. ದೋಣಿಯೊಳಗೆ ನೀರು ನುಗ್ಗಿ ಅದು ತುಂಬಿಹೋಗುವುದರಲ್ಲಿತ್ತು.</verse>
				<verse number="38">ಯೇಸುವಾದರೋ ದೋಣಿಯ ಹಿಂಭಾಗದಲ್ಲಿ ದಿಂಬನ್ನು ಒರಗಿ ನಿದ್ದೆ ಮಾಡುತ್ತಿದ್ದರು. ಶಿಷ್ಯರು ಅವರನ್ನು ಎಬ್ಬಿಸಿ, “ಗುರುವೇ, ನಾವು ಸಾಯುತ್ತಿದ್ದೇವೆ, ತಮಗೆ ಚಿಂತೆಯೇ ಇಲ್ಲವೆ?” ಎಂದರು.</verse>
				<verse number="39">ಆಗ ಯೇಸು ಎಚ್ಚೆತ್ತು, ಬಿರುಗಾಳಿಯನ್ನು ಗದರಿಸಿದರು. ಸರೋವರಕ್ಕೆ, “ಶಾಂತವಾಗಿರು! ಮೊರೆಯಬೇಡ,” ಎಂದು ಆಜ್ಞಾಪಿಸಿದರು. ತಕ್ಷಣ ಬಿರುಗಾಳಿ ನಿಂತಿತು. ವಾತಾವರಣ ಪ್ರಶಾಂತವಾಯಿತು.</verse>
				<verse number="40">ಅನಂತರ ತಮ್ಮ ಶಿಷ್ಯರಿಗೆ, “ಏಕೆ ಇಷ್ಟು ಭಯ? ಇನ್ನೂ ನಿಮಗೆ ವಿಶ್ವಾಸವಿಲ್ಲವೇ?” ಎಂದರು.</verse>
				<verse number="41">ಶಿಷ್ಯರಾದರೋ ಭಯಭ್ರಾಂತರಾಗಿ, “ಗಾಳಿಯೂ ಸರೋವರವೂ ಇವರು ಹೇಳುವಂತೆ ಕೇಳಬೇಕಾದರೆ ಇವರು ಯಾರಿರಬಹುದು?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.</verse>
			</chapter>
			<chapter number="5">
				<verse number="1">ಅವರೆಲ್ಲರು ಗಲಿಲೇಯ ಸರೋವರವನ್ನು ದಾಟಿ ಆಚೆಯ ಕಡೆಯಲ್ಲಿದ್ದ ಗೆರಸೇನರ ಪ್ರಾಂತ್ಯವನ್ನು ಸೇರಿದರು.</verse>
				<verse number="2">ಯೇಸುಸ್ವಾಮಿ ದೋಣಿಯಿಂದ ಇಳಿಯುತ್ತಲೇ, ದೆವ್ವ ಹಿಡಿದಿದ್ದ ಒಬ್ಬನು ಸಮಾಧಿಯ ಗುಹೆಯೊಳಗಿಂದ ಅವರ ಎದುರಿಗೆ ಬಂದನು.</verse>
				<verse number="3">ಸಮಾಧಿಯ ಗುಹೆಗಳೇ ಅವನಿಗೆ ವಾಸಸ್ಥಳವಾಗಿದ್ದವು.</verse>
				<verse number="4">ಅವನನ್ನು ಬಂಧಿಸಲು ಯಾರಿಂದಲೂ ಆಗುತ್ತಿರಲಿಲ್ಲ; ಸಂಕೋಲೆಯಿಂದ ಬಂಧಿಸುವುದೂ ಅಸಾಧ್ಯವಾಗಿತ್ತು. ಸರಪಳಿ ಸಂಕೋಲೆಗಳಿಂದ ಅವನನ್ನು ಕಟ್ಟಿದಾಗ ಅವುಗಳನ್ನು ತುಂಡುತುಂಡು ಮಾಡುತ್ತಿದ್ದನು. ಅವನನ್ನು ಹತೋಟಿಗೆ ತರುವ ಸಾಮರ್ಥ್ಯ ಯಾರಿಗೂ ಇರಲಿಲ್ಲ.</verse>
				<verse number="5">ಹಗಲಿರುಳೆನ್ನದೆ ಸಮಾಧಿಯ ಗುಹೆಗಳಲ್ಲಿಯೂ ಬೆಟ್ಟಗುಡ್ಡಗಳಲ್ಲಿಯೂ ಅವನು ಅಲೆದಾಡುತ್ತಾ ಅರಚಾಡುತ್ತಾ ಕಲ್ಲುಗಳಿಂದ ತನ್ನನ್ನು ತಾನೇ ಚಚ್ಚಿಕೊಳ್ಳುತ್ತಾ ಇದ್ದನು.</verse>
				<verse number="6">ದೂರದಲ್ಲಿ ಬರುತ್ತಿದ್ದ ಯೇಸುಸ್ವಾಮಿಯನ್ನು ಕಂಡು, ಅವನು ಓಡಿಬಂದು ಅವರಿಗೆ ಸಾಷ್ಟಾಂಗವೆರಗಿ,</verse>
				<verse number="7">“ಸ್ವಾಮಿ ಯೇಸುವೇ, ಪರಮೋನ್ನತ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದೇವರಾಣೆ, ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದು ಅಬ್ಬರಿಸಿದನು.</verse>
				<verse number="8">ಕಾರಣ - ಅವನನ್ನು ಬಿಟ್ಟು ತೊಲಗಬೇಕೆಂದು ಯೇಸು ದೆವ್ವಕ್ಕೆ ಈ ಮೊದಲೇ ಕಟ್ಟಪ್ಪಣೆ ಮಾಡಿದ್ದರು.</verse>
				<verse number="9">“ನಿನ್ನ ಹೆಸರೇನು?” ಎಂದು ಯೇಸು ಅವನನ್ನು ಕೇಳಲು, “ನನ್ನ ಹೆಸರು ‘ಗಣ’; ಏಕೆಂದರೆ ನಾವು ಬಹುಮಂದಿ ಇದ್ದೇವೆ,” ಎಂದನು.</verse>
				<verse number="10">ಅಲ್ಲದೆ, “ನಮ್ಮನ್ನು ಆ ಪ್ರಾಂತ್ಯದಿಂದ ಹೊರಗಟ್ಟಬೇಡಿ,” ಎಂದು ಯೇಸುವನ್ನು ಬಹಳವಾಗಿ ಬೇಡಿಕೊಂಡನು.</verse>
				<verse number="11">ಸಮೀಪದಲ್ಲೇ ಹಂದಿಗಳ ದೊಡ್ಡ ಹಿಂಡೊಂದು ಬೆಟ್ಟದ ತಪ್ಪಲಲ್ಲಿ ಮೇಯುತ್ತಿತ್ತು.</verse>
				<verse number="12">ಆ ದೆವ್ವಗಳು, “ನಾವು ಆ ಹಂದಿಗಳೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಕಳುಹಿಸಿಕೊಡಿ,” ಎಂದು ಯೇಸುವನ್ನು ಬೇಡಿಕೊಂಡವು.</verse>
				<verse number="13">ಅವರು ಹಾಗೆಯೇ ಅಪ್ಪಣೆಮಾಡಿದರು. ಕೂಡಲೇ ದೆವ್ವಗಳು ಆ ವ್ಯಕ್ತಿಯಿಂದ ಹೊರಬಂದು ಹಂದಿಗಳೊಳಗೆ ಹೊಕ್ಕವು. ಇದರ ಪರಿಣಾಮವಾಗಿ ಎರಡು ಸಾವಿರ ಹಂದಿಗಳಿದ್ದ ಆ ಹಿಂಡು, ಬೆಟ್ಟದ ಕಡಿದಾದ ಬದಿಯಿಂದ ಸರೋವರದತ್ತ ಧಾವಿಸಿ, ಅದರಲ್ಲಿ ಬಿದ್ದು ಮುಳುಗಿಹೋಯಿತು.</verse>
				<verse number="14">ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಊರುಕೇರಿಗಳಲ್ಲಿ ಈ ವಿಷಯವನ್ನು ತಿಳಿಸಿದರು. ನಡೆದ ಸಂಗತಿ ಏನೆಂಬುದನ್ನು ನೋಡಲು ಜನರು ಹೊರಟು, ಯೇಸುಸ್ವಾಮಿಯ ಬಳಿಗೆ ಬಂದರು.</verse>
				<verse number="15">ದೆವ್ವಗಣದಿಂದ ಪೀಡಿತನಾಗಿದ್ದವನು ಈಗ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಅವರೆಲ್ಲರೂ ಗಾಬರಿಗೊಂಡರು.</verse>
				<verse number="16">ನಡೆದುದನ್ನು ಕಣ್ಣಾರೆ ನೋಡಿದವರು ದೆವ್ವ ಹಿಡಿದಿದ್ದವನು ಸ್ವಸ್ಥನಾದ ವಿಧವನ್ನು ಮತ್ತು ಹಂದಿಗಳಿಗಾದ ಗತಿಯನ್ನು ಅವನಿಗೆ ವಿವರಿಸಿದರು.</verse>
				<verse number="17">ಇದನ್ನು ಕೇಳಿದ ಜನರು ಯೇಸುವಿಗೆ, ತಮ್ಮ ಪ್ರಾಂತ್ಯವನ್ನು ಬಿಟ್ಟುಹೋಗಬೇಕೆಂದು ಮನವಿಮಾಡಿಕೊಂಡರು.</verse>
				<verse number="18">ಯೇಸು ದೋಣಿಯನ್ನು ಹತ್ತುತ್ತಿದ್ದಾಗ ದೆವ್ವ ಹಿಡಿದಿದ್ದವನು, “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,” ಎಂದು ಬಿನ್ನವಿಸಿಕೊಂಡನು.</verse>
				<verse number="19">ಯೇಸು ಅದಕ್ಕೊಪ್ಪದೆ, “ನೀನು ನಿನ್ನ ಮನೆಗೂ ನಿನ್ನ ಸ್ವಜನರ ಬಳಿಗೂ ಹೋಗು. ಸರ್ವೇಶ್ವರ ನಿನಗೆ ಎಂಥಾ ಉಪಕಾರಮಾಡಿದ್ದಾರೆ, ಎಷ್ಟು ಕರುಣೆ ತೋರಿಸಿದ್ದಾರೆ ಎಂದು ಅವರಿಗೆ ವಿವರಿಸು,” ಎಂದರು.</verse>
				<verse number="20">ಅಂತೆಯೇ ಅವನು ಹೊರಟುಹೋಗಿ, ಯೇಸು ತನಗೆ ಮಾಡಿದ ಮಹದುಪಕಾರವನ್ನು ದೆಕಪೊಲಿ ಎಂಬ ನಾಡಿನಲ್ಲಿ ಪ್ರಕಟಿಸಿದನು. ಕೇಳಿದವರೆಲ್ಲರೂ ಆಶ್ಚರ್ಯಚಕಿತರಾದರು.</verse>
				<verse number="21">ಯೇಸುಸ್ವಾಮಿ ದೋಣಿಯನ್ನೇರಿ ಸರೋವರದ ಈಚೆದಡಕ್ಕೆ ಮರಳಿದರು. ತೀರವನ್ನು ಸೇರಿದೊಡನೆ ಜನರು ದೊಡ್ಡಗುಂಪಾಗಿ ಅವರ ಸುತ್ತಲೂ ನೆರೆದರು.</verse>
				<verse number="22">ಪ್ರಾರ್ಥನಾಮಂದಿರದ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನ ಹೆಸರು ಯಾಯೀರ.</verse>
				<verse number="23">ಅವನು ಯೇಸುವನ್ನು ನೋಡಿದೊಡನೆ ಅವರ ಪಾದಕ್ಕೆರಗಿ, “ನನ್ನ ಪುಟ್ಟ ಮಗಳು ಮರಣಾವಸ್ಥೆಯಲ್ಲಿದ್ದಾಳೆ; ತಾವು ಬಂದು ತಮ್ಮ ಹಸ್ತವನ್ನು ಅವಳ ಮೇಲಿಟ್ಟು, ಅವಳು ಗುಣಹೊಂದಿ ಬದುಕುವಂತೆ ಅನುಗ್ರಹಿಸಬೇಕು,” ಎಂದು ಬಹಳವಾಗಿ ವಿನಂತಿಸಿದನು.</verse>
				<verse number="24">ಯೇಸು ಅವನ ಜೊತೆಯಲ್ಲಿ ಹೊರಟರು. ದೊಡ್ಡ ಜನಸ್ತೋಮವು ಯೇಸುವನ್ನು ಮುತ್ತಿಕೊಂಡು ಅವರ ಜೊತೆಯಲ್ಲೇ ಹೊರಟಿತು.</verse>
				<verse number="25">ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ಬಳಲುತ್ತಿದ್ದ ಮಹಿಳೆಯೊಬ್ಬಳು ಆ ಗುಂಪಿನಲ್ಲಿದ್ದಳು.</verse>
				<verse number="26">ಅನೇಕ ವೈದ್ಯರಿಂದ ಚಿಕಿತ್ಸೆಪಡೆದಿದ್ದರೂ ಕೈಯಲ್ಲಿದ್ದ ಹಣವನ್ನೆಲ್ಲಾ ವ್ಯಯಮಾಡಿದ್ದರೂ ಅವಳ ರೋಗ ಮಾತ್ರ ಉಲ್ಬಣ ಆಗುತ್ತಿತ್ತೇ ಹೊರತು ಸ್ವಲ್ಪವೂ ಗುಣಮುಖ ಆಗುತ್ತಿರಲಿಲ್ಲ.</verse>
				<verse number="27">ಯೇಸುವಿನ ವಿಷಯವಾಗಿ ಜನರು ಹೇಳುತ್ತಿದ್ದುದನ್ನು ಆಕೆ ಕೇಳಿ, ಜನರ ಗುಂಪಿನಲ್ಲಿ ಸೇರಿ, ಯೇಸುವನ್ನು ಹಿಂಬಾಲಿಸಿದಳು.</verse>
				<verse number="28">“ನಾನು ಅವರ ಉಡುಪನ್ನು ಮುಟ್ಟಿದರೂ ಸಾಕು, ಗುಣಹೊಂದುವೆನು,” ಎಂದುಕೊಂಡು ಯೇಸುವಿನ ಉಡುಪನ್ನು ಮುಟ್ಟಿದಳು.</verse>
				<verse number="29">ಅದನ್ನು ಮುಟ್ಟಿದಾಕ್ಷಣ ಅವಳ ರಕ್ತಸ್ರಾವ ನಿಂತುಹೋಯಿತು. ಕಾಡುತ್ತಿದ್ದ ವ್ಯಾಧಿಯಿಂದ ತಾನು ಗುಣಹೊಂದಿದ್ದೇನೆಂದು ಆಕೆಗೆ ಅರಿವಾಯಿತು.</verse>
				<verse number="30">ಇತ್ತ ಯೇಸು, ರೋಗವನ್ನು ಗುಣಪಡಿಸುವ ಶಕ್ತಿ ತಮ್ಮಿಂದ ಹೊರಹೊಮ್ಮಿದ್ದನ್ನು ತಕ್ಷಣ ತಿಳಿದು, ಸುತ್ತಲಿದ್ದ ಜನರತ್ತ ತಮ್ಮ ದೃಷ್ಟಿಯನ್ನು ಹರಿಸಿ, “ನನ್ನ ಉಡುಪನ್ನು ಮುಟ್ಟಿದವರಾರು?” ಎಂದು ಪ್ರಶ್ನಿಸಿದರು.</verse>
				<verse number="31">ಅದಕ್ಕೆ ಶಿಷ್ಯರು, “ತಮ್ಮ ಸುತ್ತಲೂ ಜನರು ಮುತ್ತಿಕೊಂಡಿರುವುದು ತಮಗೆ ತಿಳಿದೇ ಇದೆ. ಆದರೂ ‘ನನ್ನನ್ನು ಮುಟ್ಟಿದವರು ಯಾರು’ ಎಂದು ಕೇಳುತ್ತೀರಲ್ಲಾ,” ಎಂದರು.</verse>
				<verse number="32">ಆದರೆ ಯೇಸು ತಮ್ಮನ್ನು ಮುಟ್ಟಿದವರು ಯಾರೆಂದು ಗುರುತಿಸಲು ಸುತ್ತಲೂ ನೋಡುತ್ತಿದ್ದರು.</verse>
				<verse number="33">ತನ್ನಲ್ಲಿ ಸಂಭವಿಸಿದ್ದನ್ನು ಅರಿತಿದ್ದ ಆ ಮಹಿಳೆ ಭಯದಿಂದ ನಡುಗುತ್ತಾ ಮುಂದೆ ಬಂದು ಯೇಸುವಿನ ಪಾದಕ್ಕೆ ಎರಗಿ, ಅವರಿಗೆ ನಡೆದ ಸಂಗತಿಯನ್ನು ತಿಳಿಸಿದಳು.</verse>
				<verse number="34">ಯೇಸು ಆಕೆಗೆ, “ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ; ಸಮಾಧಾನದಿಂದ ಹೋಗು, ವ್ಯಾಧಿಮುಕ್ತಳಾಗಿ ಆರೋಗ್ಯದಿಂದಿರು,” ಎಂದು ಅನುಗ್ರಹಿಸಿದರು.</verse>
				<verse number="35">ಯೇಸುಸ್ವಾಮಿ ಇನ್ನೂ ಮಾತನಾಡುತ್ತ ಇರುವಾಗಲೇ ಯಾಯೀರನ ಮನೆಯಿಂದ ಕೆಲವರು ಬಂದು ಅವನಿಗೆ, “ನಿಮ್ಮ ಮಗಳು ತೀರಿಹೋದಳು; ಇನ್ನೇಕೆ ಗುರುವಿಗೆ ತೊಂದರೆ ಕೊಡುತ್ತೀರಿ?” ಎಂದರು.</verse>
				<verse number="36">ಅವರು ಹೇಳಿದ ಮಾತುಗಳನ್ನು ಯೇಸು ಕೇಳಿಯೂ ಅವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳದೆ ಯಾಯೀರನಿಗೆ, “ಭಯಪಡಬೇಡ, ನಿನ್ನಲ್ಲಿ ವಿಶ್ವಾಸ ಒಂದಿದ್ದರೆ ಸಾಕು,” ಎಂದರು.</verse>
				<verse number="37">ಅನಂತರ ಪೇತ್ರ, ಯಕೋಬ ಹಾಗು ಅವನ ಸೋದರ ಯೊವಾನ್ನ, ಇವರನ್ನು ಮಾತ್ರ ತಮ್ಮ ಜೊತೆಯಲ್ಲಿ ಕರೆದುಕೊಂಡು ಯಾಯೀರನ ಮನೆಯನ್ನು ತಲುಪಿದರು.</verse>
				<verse number="38">ಅಲ್ಲಿ ಜನರ ಗೋಳಾಟ, ಗೊಂದಲದ ದೃಶ್ಯ ಅವರ ಕಣ್ಣಿಗೆ ಬಿತ್ತು.</verse>
				<verse number="39">ಯೇಸು ಮನೆಯೊಳಕ್ಕೆ ಹೋಗಿ, “ಏತಕ್ಕೆ ಇಷ್ಟೆಲ್ಲಾ ಗಲಭೆ, ಗೋಳಾಟ? ಬಾಲಕಿ ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು.</verse>
				<verse number="40">ಇದನ್ನು ಕೇಳಿದ ಜನರು, ಯೇಸುವನ್ನು ಪರಿಹಾಸ್ಯ ಮಾಡಿದರು. ಆದರೆ ಯೇಸು ಎಲ್ಲರನ್ನೂ ಹೊರಗೆ ಕಳುಹಿಸಿ ಬಾಲಕಿಯ ತಂದೆತಾಯಿಯನ್ನು ಮತ್ತು ತಮ್ಮೊಂದಿಗಿದ್ದ ಮೂವರು ಶಿಷ್ಯರನ್ನು ಮಾತ್ರ ಕರೆದುಕೊಂಡು ಆ ಬಾಲಕಿಯನ್ನು ಮಲಗಿಸಿದ್ದ ಕೊಠಡಿಯನ್ನು ಪ್ರವೇಶಿಸಿದರು.</verse>
				<verse number="41">ಆಕೆಯ ಕೈಯನ್ನು ಹಿಡಿದು, “ತಲಿಥಾಕೂಮ್‍” ಎಂದರು. (’ಮಗಳೇ, ನಿನಗೆ ಹೇಳುತ್ತೇನೆ, ಎದ್ದೇಳು’ ಎಂಬುದು ಆ ಮಾತಿನ ಅರ್ಥ).</verse>
				<verse number="42">ಅವಳು ತಟ್ಟನೆ ಎದ್ದು ನಡೆದಾಡತೊಡಗಿದಳು. ಅಲ್ಲಿದ್ದವರೆಲ್ಲರೂ ಆಶ್ಚರ್ಯಭರಿತರಾದರು. ಅವಳಿಗೆ ಹನ್ನೆರಡು ವರ್ಷ ವಯಸ್ಸು ಆಗಿತ್ತು.</verse>
				<verse number="43">ಈ ವಿಷಯವನ್ನು ಬೇರೆ ಯಾರಿಗೂ ತಿಳಿಸಬಾರದೆಂದು ಯೇಸು ಅವರಿಗೆ ಕಟ್ಟಪ್ಪಣೆ ಮಾಡಿದರು. ಬಾಲಕಿಗೆ ತಿನ್ನಲು ಏನಾದರೂ ಕೊಡುವಂತೆ ತಿಳಿಸಿದರು.</verse>
			</chapter>
			<chapter number="6">
				<verse number="1">ಯೇಸುಸ್ವಾಮಿ ಅಲ್ಲಿಂದ ಹೊರಟು ತಮ್ಮ ಸ್ವಂತ ಊರಿಗೆ ಹೋದರು. ಶಿಷ್ಯರು ಅವರನ್ನು ಹಿಂಬಾಲಿಸಿದರು.</verse>
				<verse number="2">ಸಬ್ಬತ್‍ದಿನ ಅಲ್ಲಿಯ ಪ್ರಾರ್ಥನಾಮಂದಿರದಲ್ಲಿ ಉಪದೇಶ ಮಾಡತೊಡಗಿದರು. ಕಿಕ್ಕಿರಿದು ನೆರೆದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. “ಇದೆಲ್ಲಾ ಇವನಿಗೆ ಎಲ್ಲಿಂದ ಬಂದಿತು? ಇವನು ಪಡೆದಿರುವ ಜ್ಞಾನವಾದರೂ ಎಂಥಾದ್ದು? ಇವನಿಂದ ಮಹತ್ಕಾರ್ಯಗಳು ಆಗುವುದಾದರೂ ಹೇಗೆ?</verse>
				<verse number="3">ಇವನು ಆ ಬಡಗಿಯಲ್ಲವೆ? ಮರಿಯಳ ಮಗನಲ್ಲವೆ? ಯಕೋಬ, ಯೋಸೆ, ಯೂದ ಮತ್ತು ಸಿಮೋನ ಇವರ ಸಹೋದರನಲ್ಲವೆ? ಇವನ ಸಹೋದರಿಯರು ಇಲ್ಲಿಯೇ ವಾಸಮಾಡುತ್ತಿಲ್ಲವೆ?” ಎಂದು ಹೇಳುತ್ತಾ ಯೇಸುವನ್ನು ತಾತ್ಸಾರಮಾಡಿದರು.</verse>
				<verse number="4">ಆಗ ಯೇಸು, “ಪ್ರವಾದಿಗೆ ಬೇರೆ ಎಲ್ಲಿಯಾದರೂ ಗೌರವ ದೊರಕೀತು. ಆದರೆ ಸ್ವಗ್ರಾಮದಲ್ಲಿ, ಸ್ವಜನರಲ್ಲಿ, ಸ್ವಗೃಹದಲ್ಲಿ ಗೌರವ ದೊರಕದು,” ಎಂದರು.</verse>
				<verse number="5">ಕೆಲವು ರೋಗಿಗಳ ಮೇಲೆ ಕೈಗಳನ್ನಿರಿಸಿ, ಅವರನ್ನು ಗುಣಪಡಿಸಿದ್ದನ್ನು ಬಿಟ್ಟರೆ ಇನ್ನಾವ ಮಹತ್ತಾದ ಕಾರ್ಯಗಳನ್ನೂ ಅವರು ಅಲ್ಲಿ ಮಾಡಲಾಗಲಿಲ್ಲ.</verse>
				<verse number="6">ಆ ಜನರ ಅವಿಶ್ವಾಸವನ್ನು ಕಂಡು ಯೇಸುವಿಗೆ ಬಹಳ ಅಚ್ಚರಿಯಾಯಿತು.</verse>
				<verse number="7">ಅನಂತರ ಯೇಸುಸ್ವಾಮಿ ಸುತ್ತಮುತ್ತಲಿನ ಊರುಗಳಿಗೆ ಹೋಗಿ ಜನರಿಗೆ ಪ್ರಬೋಧಿಸಿದರು. ಇದಲ್ಲದೆ ಹನ್ನೆರಡು ಮಂದಿ ಶಿಷ್ಯರನ್ನು ಕರೆದು ಅವರಿಗೆ ದೆವ್ವಬಿಡಿಸುವ ಅಧಿಕಾರವನ್ನಿತ್ತು, ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದರು.</verse>
				<verse number="8">ಕಳುಹಿಸುವಾಗ, “ಪ್ರಯಾಣ ದಂಡವೊಂದನ್ನು ಹೊರತು ಇನ್ನೇನನ್ನೂ ತೆಗೆದುಕೊಂಡು ಹೋಗಬೇಡಿ.</verse>
				<verse number="9">ಬುತ್ತಿ, ಜೋಳಿಗೆ, ಜೇಬಿನಲ್ಲಿ ಹಣ, ಯಾವುದೂ ಬೇಡ. ಪಾದರಕ್ಷೆಯನ್ನು ಮೆಟ್ಟಿಕೊಂಡರೆ ಸಾಕು. ಎರಡು ಅಂಗಿಗಳನ್ನೂ ತೊಟ್ಟುಕೊಳ್ಳಬೇಡಿ,” ಎಂದು ಅಪ್ಪಣೆಮಾಡಿದರು.</verse>
				<verse number="10">ಇದಲ್ಲದೆ, “ನೀವು ಯಾವುದೇ ಒಂದು ಊರಿಗೆ ಹೋದಾಗ ಆ ಊರನ್ನು ಬಿಡುವವರೆಗೂ ಆತಿಥ್ಯ ನೀಡುವ ಯಾವುದಾದರೂ ಒಂದು ಮನೆಯಲ್ಲೇ ಉಳಿದುಕೊಳ್ಳಿ.</verse>
				<verse number="11">ಯಾವುದೇ ಊರಿನ ಜನರು ನಿಮ್ಮನ್ನು ಸ್ವಾಗತಿಸದೆಯೂ ನಿಮ್ಮ ಬೋಧನೆಗೆ ಕಿವಿಗೊಡದೆಯೂ ಹೋದರೆ, ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅವರ ವಿರುದ್ಧ ಅದು ಸಾಕ್ಷಿಯಾಗಿರಲಿ,” ಎಂದರು.</verse>
				<verse number="12">ಶಿಷ್ಯರು ಹೊರಟುಹೋಗಿ, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ,” ಎಂದು ಜನರಿಗೆ ಸಾರಿ ಹೇಳಿದರು.</verse>
				<verse number="13">ದೆವ್ವಹಿಡಿದಿದ್ದ ಅನೇಕರಿಂದ ದೆವ್ವಗಳನ್ನು ಹೊರಗಟ್ಟಿದರು. ತೈಲಲೇಪನಮಾಡಿ ಅನೇಕ ರೋಗಿಗಳನ್ನು ಗುಣಪಡಿಸಿದರು.</verse>
				<verse number="14">ಇಷ್ಟರಲ್ಲಿ ಯೇಸುಸ್ವಾಮಿಯ ಹೆಸರು ಮನೆಮಾತಾಯಿತು. ಅದು ಹೆರೋದ ಅರಸನ ಕಿವಿಗೂ ಬಿತ್ತು. ಯೇಸುವಿನ ವಿಚಾರವಾಗಿ ಕೆಲವರು, “ಮಡಿದ ಸ್ನಾನಿಕ ಯೊವಾನ್ನನೇ ಮರಳಿ ಜೀವಂತವಾಗಿ ಬಂದಿದ್ದಾನೆ; ಆದುದರಿಂದಲೇ ಮಹತ್ಕಾರ್ಯಗಳನ್ನು ಮಾಡುವ ಶಕ್ತಿ ಇವನಿಗಿದೆ,” ಎನ್ನುತ್ತಿದ್ದರು.</verse>
				<verse number="15">ಇನ್ನು ಕೆಲವರು, ‘ಈತನೇ ಎಲೀಯನು’ ಎಂದೂ ಮತ್ತೆ ಕೆಲವರು, “ಪ್ರಾಚೀನ ಪ್ರವಾದಿಗಳಂತೆ ಈತನೂ ಒಬ್ಬ ಪ್ರವಾದಿ,” ಎಂದೂ ಹೇಳುತ್ತಿದ್ದರು.</verse>
				<verse number="16">ಇದನ್ನೆಲ್ಲಾ ಕೇಳಿದ ಹೆರೋದನು, “ಹೌದು, ನಾನು ಶಿರಚ್ಛೇದನಮಾಡಿದ ಯೊವಾನ್ನನೇ ಮರಳಿ ಜೀವಂತನಾಗಿ ಬಂದಿದ್ದಾನೆ,” ಎಂದನು.</verse>
				<verse number="17">ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದಿಯಳ ನಿಮಿತ್ತ ಯೊವಾನ್ನನನ್ನು ಸೆರೆಹಿಡಿಸಿ ಬಂಧನದಲ್ಲಿರಿಸಿದ್ದನು. ಹೆರೋದಿಯಳು ಹೆರೋದನ ಸಹೋದರ ಫಿಲಿಪ್ಪನ ಧರ್ಮಪತ್ನಿ. ಆದರೂ ಹೆರೋದನು ಆಕೆಯನ್ನು ಹೆಂಡತಿಯಾಗಿ ಇಟ್ಟುಕೊಂಡಿದ್ದನು.</verse>
				<verse number="18">ಈ ಕಾರಣ ಯೊವಾನ್ನನು, “ನಿನ್ನ ಸಹೋದರನ ಪತ್ನಿಯನ್ನು ನೀನು ಇಟ್ಟುಕೊಂಡಿರುವುದು ನ್ಯಾಯವಲ್ಲ,” ಎಂದು ಪದೇಪದೇ ಅವನನ್ನು ಎಚ್ಚರಿಸುತ್ತಿದ್ದನು.</verse>
				<verse number="19">ಇದರ ನಿಮಿತ್ತ ಹೆರೋದಿಯಳು ಯೊವಾನ್ನನ ಮೇಲೆ ಹಗೆಯಿಟ್ಟು ಆತನನ್ನು ಕೊಲ್ಲಿಸಬೇಕು ಎಂದಿದ್ದಳು. ಆದರೆ ತನ್ನ ಸೇಡನ್ನು ತೀರಿಸಿಕೊಳ್ಳಲು ಅವಳಿಂದಾಗಿರಲಿಲ್ಲ.</verse>
				<verse number="20">ಏಕೆಂದರೆ, ಯೊವಾನ್ನನು ಸಂತನು ಹಾಗೂ ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವೂ ಆತನಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೋದನ ಮನಸ್ಸು ಅಲ್ಲೋಲಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನು ಕಿವಿಗೊಟ್ಟು ಕೇಳುತ್ತಿದ್ದನು.</verse>
				<verse number="21">ಕಡೆಗೊಮ್ಮೆ, ಹೆರೋದಿಯಳಿಗೆ ಅನುಕೂಲವಾದ ಸಂದರ್ಭ ಒದಗಿತು. ಹೆರೋದನು ತನ್ನ ಹುಟ್ಟುಹಬ್ಬದ ದಿನಾಚರಣೆಯಂದು, ಆಸ್ಥಾನಿಕರಿಗೂ ಸೇನಾಧಿಪತಿಗಳಿಗೂ ಗಲಿಲೇಯ ಪ್ರಾಂತ್ಯದ ಪ್ರಮುಖರಿಗೂ ಔತಣಕೂಟವನ್ನು ಏರ್ಪಡಿಸಿದನು.</verse>
				<verse number="22">ಆ ಸಮಾರಂಭದಲ್ಲಿ ಹೆರೋದಿಯಳ ಮಗಳು ಔತಣ ಶಾಲೆಗೆ ಬಂದು ನರ್ತನಮಾಡಿದಳು. ಹೆರೋದನೂ ಅವನ ಜೊತೆಯಲ್ಲಿ ಭೋಜನಕ್ಕೆ ಕುಳಿತಿದ್ದ ಅತಿಥಿಗಳೂ ಅದನ್ನು ಬಹಳವಾಗಿ ಮೆಚ್ಚಿಕೊಂಡರು.</verse>
				<verse number="23">ಆಗ ಅರಸ ಹೆರೋದನು ಅವಳಿಗೆ, “ನಿನಗೆ ಏನುಬೇಕಾದರೂ ಕೇಳು, ಕೊಡುತ್ತೇನೆ” ಎಂದನು. “ನೀನು ಏನು ಕೇಳಿಕೊಂಡರೂ ಸರಿ, ನನ್ನ ರಾಜ್ಯದಲ್ಲಿ ಅರ್ಧವನ್ನು ಕೇಳಿಕೊಂಡರೂ ಅದನ್ನು ನಿನಗೆ ಕೊಡುತ್ತೇನೆ,” ಎಂದು ಪ್ರಮಾಣ ಮಾಡಿದನು.</verse>
				<verse number="24">ಅವಳು ತನ್ನ ತಾಯಿಯ ಬಳಿಗೆ ಹೋಗಿ, “ಅಮ್ಮಾ, ನಾನು ಏನನ್ನು ಕೇಳಿಕೊಳ್ಳಲಿ?” ಎಂದು ವಿಚಾರಿಸಿದಳು. “ಸ್ನಾನಿಕ ಯೊವಾನ್ನನ ತಲೆಯನ್ನು ಕೇಳು,” ಎಂದು ಆಕೆ ಮಗಳನ್ನು ಪ್ರೇರೇಪಿಸಿದಳು.</verse>
				<verse number="25">ಕೂಡಲೆ ಅವಳು ಅರಸನ ಬಳಿಗೆ ಧಾವಿಸಿ, “ಸ್ನಾನಿಕ ಯೊವಾನ್ನನ ತಲೆಯನ್ನು ಇದೀಗಲೇ ಒಂದು ತಟ್ಟೆಯಲ್ಲಿ ತರಿಸಿಕೊಡಿ; ಇದೇ ನನ್ನ ಬೇಡಿಕೆ,” ಎಂದು ಕೇಳಿಕೊಂಡಳು.</verse>
				<verse number="26">ಅರಸನಿಗೆ ಅತೀವ ದುಃಖವಾಯಿತು. ಆದರೂ ಅತಿಥಿಗಳೆಲ್ಲರ ಮುಂದೆ ತಾನು ಮಾಡಿದ ಪ್ರಮಾಣದ ನಿಮಿತ್ತ ಅವಳ ಕೋರಿಕೆಯನ್ನು ನಿರಾಕರಿಸಲಾಗಲಿಲ್ಲ.</verse>
				<verse number="27">ಆದುದರಿಂದ ಅವನು ಒಬ್ಬ ಪಹರೆಯವನನ್ನು ಕರೆದು, ಕೂಡಲೇ ಯೊವಾನ್ನನ ತಲೆಯನ್ನು ತರಬೇಕೆಂದು ಅವನಿಗೆ ಆಜ್ಞೆಮಾಡಿ ಕಳುಹಿಸಿದನು.</verse>
				<verse number="28">ಪಹರೆಯವನು ಸೆರೆಮನೆಗೆ ಹೋಗಿ ಯೊವಾನ್ನನ ತಲೆಯನ್ನು ಕತ್ತರಿಸಿ, ಅದನ್ನು ತಟ್ಟೆಯಲ್ಲಿ ಇಟ್ಟು ಹುಡುಗಿಗೆತಂದುಕೊಟ್ಟನು. ಅವಳು ಅದನ್ನು ತನ್ನ ತಾಯಿಗೆ ಕೊಟ್ಟಳು.</verse>
				<verse number="29">ಇದನ್ನು ಕೇಳಿದ ಯೊವಾನ್ನನ ಶಿಷ್ಯರು ಅಲ್ಲಿಗೆ ಬಂದು ಶವವನ್ನು ತೆಗೆದುಕೊಂಡು ಹೋಗಿ ಸಮಾಧಿಮಾಡಿದರು.</verse>
				<verse number="30">ಪ್ರೇಷಿತರು ಯೇಸುಸ್ವಾಮಿಯ ಬಳಿಗೆ ಹಿಂದಿರುಗಿ ಬಂದು ತಾವು ಮಾಡಿದ ಸಕಲ ಕಾರ್ಯಕಲಾಪಗಳ ಹಾಗು ನೀಡಿದ ಬೋಧನೆಯ ವರದಿಯನ್ನು ಒಪ್ಪಿಸಿದರು.</verse>
				<verse number="31">ಜನರು ಗುಂಪು ಗುಂಪಾಗಿ ಎಡೆಬಿಡದೆ ಬರುತ್ತಾ ಹೋಗುತ್ತಾ ಇದ್ದುದರಿಂದ ಯೇಸುವಿಗೆ ಮತ್ತು ಅವರ ಶಿಷ್ಯರಿಗೆ ಊಟಮಾಡಲೂ ಬಿಡುವಿರಲಿಲ್ಲ.</verse>
				<verse number="32">ಆದುದರಿಂದ ಯೇಸು, “ಬನ್ನಿ, ಪ್ರತ್ಯೇಕವಾಗಿ ನಾವು ನಿರ್ಜನಪ್ರದೇಶಕ್ಕೆ ಹೋಗಿ ಸ್ವಲ್ಪ ವಿಶ್ರಮಿಸಿಕೊಂಡು ಬರೋಣ,” ಎಂದರು. ಅಂತೆಯೇ ಅವರೆಲ್ಲರೂ ಪ್ರತ್ಯೇಕವಾಗಿ ದೋಣಿಯನ್ನು ಹತ್ತಿ ಏಕಾಂತ ಪ್ರದೇಶಕ್ಕೆ ಹೊರಟರು.</verse>
				<verse number="33">ಆದರೆ ಅವರು ಹೋಗುತ್ತಿರುವುದನ್ನು ಕಂಡು ಗುರುತಿಸಿದ ಅನೇಕರು ಎಲ್ಲಾ ಊರುಗಳಿಂದ ಕಾಲ್ದಾರಿಯಲ್ಲಿ ತ್ವರಿತವಾಗಿ ಸಾಗಿ ಅವರಿಗೆ ಮುಂಚಿತವಾಗಿಯೇ ಆ ಸ್ಥಳವನ್ನು ಸೇರಿದರು.</verse>
				<verse number="34">ಯೇಸು ದೋಣಿಯಿಂದ ಇಳಿದಾಗ ಅಲ್ಲಿ ದೊಡ್ಡ ಜನಸಮೂಹವೇ ಸೇರಿತ್ತು. ಆ ಜನರು ಕುರುಬನಿಲ್ಲದ ಕುರಿಗಳಂತಿರುವುದನ್ನು ಕಂಡು ಯೇಸುವಿನ ಮನ ಕರಗಿತು; ಅನೇಕ ವಿಷಯಗಳನ್ನು ಕುರಿತು ಅವರಿಗೆ ಉಪದೇಶವಿತ್ತರು.</verse>
				<verse number="35">ಅಷ್ಟರಲ್ಲಿ ಸಂಜೆಯಾಗುತ್ತಾ ಬಂದಿತು. ಶಿಷ್ಯರು ಯೇಸುವಿನ ಬಳಿಗೆ ಬಂದು,</verse>
				<verse number="36">“ಈಗಾಗಲೇ ಹೊತ್ತು ಮೀರಿಹೋಯಿತು; ಇದು ನಿರ್ಜನಪ್ರದೇಶ; ಇನ್ನು ಜನರನ್ನು ಕಳುಹಿಸಿಬಿಡಿ. ಅವರು ಸಮೀಪದ ಊರುಕೇರಿಗಳಿಗೆ ಹೋಗಿ ಊಟಕ್ಕೇ ಏನಾದರೂ ಕೊಂಡುಕೊಳ್ಳಲಿ,” ಎಂದರು.</verse>
				<verse number="37">ಆಗ ಯೇಸು, “ನೀವೇ ಅವರಿಗೆ ಊಟಕ್ಕೇನಾದರೂ ಕೊಡಿ,” ಎಂದರು. ಅದಕ್ಕೆ ಶಿಷ್ಯರು, “ನಾವು ಹೋಗಿ ಇನ್ನೂರು ದೆನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುತಂದು ಅವರಿಗೆ ಊಟಕ್ಕೆ ಬಡಿಸೋಣವೇನು?” ಎಂದರು.</verse>
				<verse number="38">ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿಕೊಂಡು ಬನ್ನಿ,” ಎಂದರು. ಅವರು ವಿಚಾರಿಸಿಕೊಂಡು ಬಂದು, “ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ,” ಎಂದು ತಿಳಿಸಿದರು.</verse>
				<verse number="39">ಎಲ್ಲರು ಪಂಕ್ತಿಪಂಕ್ತಿಯಾಗಿ ಹಸಿರು ಹುಲ್ಲಿನ ಮೇಲೆ ಊಟಕ್ಕೆ ಕುಳಿತುಕೊಳ್ಳಬೇಕೆಂದು ಯೇಸು ಅಪ್ಪಣೆಮಾಡಿದರು.</verse>
				<verse number="40">ಅವರು ಐವತ್ತರಂತೆಯೂ ನೂರರಂತೆಯೂ ಪಂಕ್ತಿಯಲ್ಲಿ ಕುಳಿತರು.</verse>
				<verse number="41">ಯೇಸು ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು, ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೇವರಿಗೆ ಸ್ತೋತ್ರ ಸಲ್ಲಿಸಿದರು. ತರುವಾಯ ಆ ರೊಟ್ಟಿಗಳನ್ನು ಮುರಿದು ಜನರಿಗೆ ಬಡಿಸುವಂತೆ ಅವನ್ನು ಶಿಷ್ಯರಿಗೆ ಕೊಟ್ಟರು. ಅಂತೆಯೇ ಎರಡು ಮೀನುಗಳನ್ನು ಜನರೆಲ್ಲರಿಗೆ ಹಂಚುವಂತೆ ಮಾಡಿದರು.</verse>
				<verse number="42">ಎಲ್ಲರೂ ಹೊಟ್ಟೆತುಂಬಾ ತಿಂದು ತೃಪ್ತರಾದರು.</verse>
				<verse number="43">ಇನ್ನೂ ಉಳಿದಿದ್ದ ರೊಟ್ಟಿ ಮತ್ತು ಮೀನಿನ ತುಂಡುಗಳನ್ನು ಒಟ್ಟುಗೂಡಿಸಿದಾಗ, ಅವು ಹನ್ನೆರಡು ಬುಟ್ಟಿ ತುಂಬ ಆದವು.</verse>
				<verse number="44">ಊಟಮಾಡಿದವರಲ್ಲಿ ಗಂಡಸರ ಸಂಖ್ಯೆಯೇ ಐದು ಸಾವಿರ.</verse>
				<verse number="45">ಇದಾದ ಮೇಲೆ ಯೇಸುಸ್ವಾಮಿ, ತಾವು ಜನರ ಗುಂಪನ್ನು ಕಳುಹಿಸಿಬಿಡುವಷ್ಟರಲ್ಲಿ ಶಿಷ್ಯರು ದೋಣಿ ಹತ್ತಿ ತಮಗಿಂತ ಮುಂದಾಗಿ ಸರೋವರದ ಆ ಕಡೆಗಿದ್ದ ಬೆತ್ಸಾಯಿದಕ್ಕೆ ಹೋಗುವಂತೆ ಆಜ್ಞಾಪಿಸಿದರು.</verse>
				<verse number="46">ಜನರನ್ನು ಬೀಳ್ಕೊಟ್ಟ ಬಳಿಕ ಯೇಸು ಪ್ರಾರ್ಥನೆಮಾಡಲು ಬೆಟ್ಟಕ್ಕೆ ಹೋದರು.</verse>
				<verse number="47">ಕತ್ತಲೆ ಕವಿದಾಗ ದೋಣಿಯು ಸರೋವರದ ಮಧ್ಯೆ ಸಾಗಿತ್ತು. ಇತ್ತ ಯೇಸು ಒಬ್ಬರೇ ದಡದಲ್ಲಿದ್ದರು.</verse>
				<verse number="48">ಎದುರುಗಾಳಿ ಬೀಸುತ್ತಿದ್ದುದರಿಂದ ಶಿಷ್ಯರು ಹುಟ್ಟುಹಾಕಿ ದಣಿದುಹೋಗಿದ್ದರು. ಇದನ್ನು ಕಂಡ ಯೇಸು ಸರೋವರದ ನೀರಿನ ಮೇಲೆ ನಡೆದುಕೊಂಡು ಅವರ ಕಡೆಗೆ ಬಂದು, ಅವರನ್ನು ದಾಟಿ ಮುಂದೆ ಹೋಗುವುದರಲ್ಲಿದ್ದರು.</verse>
				<verse number="49">ಆಗ ಸುಮಾರು ರಾತ್ರಿಯ ಕಡೇ ಜಾವದ ಸಮಯ. ಸರೋವರದ ಮೇಲೆ ನಡೆದು ಬರುತ್ತಿದ್ದ ಯೇಸುವನ್ನು ಶಿಷ್ಯರು ನೋಡಿದರು; ಭೂತವೆಂದು ಭಾವಿಸಿ ಭಯದಿಂದ ಚೀರಿದರು. ಅವರೆಲ್ಲರೂ ಯೇಸುವನ್ನು ನೋಡಿ ದಿಗಿಲುಗೊಂಡಿದ್ದರು.</verse>
				<verse number="50">ತಕ್ಷಣವೇ ಯೇಸು ಅವರೊಡನೆ ಮಾತನಾಡುತ್ತಾ, “ಭಯಪಡಬೇಡಿ, ಬೇರೆ ಯಾರೂ ಅಲ್ಲ, ನಾನೇ; ಧೈರ್ಯದಿಂದಿರಿ,” ಎಂದು ಅವರೊಡನೆ ಮಾತಾಡಿ ದೋಣಿಯನ್ನು ಹತ್ತಿದರು.</verse>
				<verse number="51">ಆಗ ಎದುರುಗಾಳಿ ನಿಂತುಹೋಯಿತು. ಶಿಷ್ಯರು ಬೆಕ್ಕಸಬೆರಗಾದರು. ಅವರ ಬುದ್ಧಿ ಮಂದವಾಗಿತ್ತು.</verse>
				<verse number="52">ರೊಟ್ಟಿಗಳ ಅದ್ಭುತವನ್ನು ಅವರು ಇನ್ನೂ ಗ್ರಹಿಸಿಕೊಂಡಿರಲಿಲ್ಲ.</verse>
				<verse number="53">ಅವರೆಲ್ಲರು ಸರೋವರವನ್ನು ದಾಟಿ ಗೆನಸರೇತ್ ಊರಿನ ದಡ ಸೇರಿದರು.</verse>
				<verse number="54">ಅವರು ದೋಣಿಯನ್ನು ಕಟ್ಟಿ, ಅದರಿಂದ ಇಳಿದ ಕೂಡಲೇ ಅಲ್ಲಿಯ ಜನರು ಯೇಸುಸ್ವಾಮಿಯ ಗುರುತು ಹಚ್ಚಿದರು. ಒಡನೆ ಸುತ್ತಮುತ್ತಲೆಲ್ಲಾ ಓಡಾಡಿ, ರೋಗಿಗಳನ್ನು ಹಾಸಿಗೆಗಳ ಸಹಿತ ಹೊತ್ತುಕೊಂಡು, ಯೇಸು ಎಲ್ಲೆಲ್ಲಿ ಇದ್ದಾರೆಂದು ಕೇಳಿದರೋ ಅಲ್ಲೆಲ್ಲಾ ಹೋಗತೊಡಗಿದರು.</verse>
				<verse number="55">ಯೇಸು ಹಳ್ಳಿಗಳಿಗಾಗಲಿ, ಪಟ್ಟಣಪಾಳೆಯಗಳಿಗಾಗಲಿ ಹೋದಾಗಲೆಲ್ಲಾ ಜನರು ರೋಗಿಗಳನ್ನು ಅಲ್ಲಿಯ ಸಂತೆಬೀದಿ ಚೌಕಗಳಿಗೆ ಕರೆತರುತ್ತಿದ್ದರು.</verse>
				<verse number="56">ಅವರ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಯೇಸುವನ್ನು ಬೇಡಿಕೊಳ್ಳುತ್ತಿದ್ದರು. ಹಾಗೆ ಮುಟ್ಟಿದವರೆಲ್ಲರೂ ಗುಣಹೊಂದುತ್ತಿದ್ದರು.</verse>
			</chapter>
			<chapter number="7">
				<verse number="1">ಒಮ್ಮೆ ಫರಿಸಾಯರು ಮತ್ತು ಜೆರುಸಲೇಮಿನಿಂದ ಕೆಲವು ಮಂದಿ ಧರ್ಮಶಾಸ್ತ್ರಿಗಳು ಯೇಸುಸ್ವಾಮಿಯ ಬಳಿಗೆ ಬಂದು ಸೇರಿದರು.</verse>
				<verse number="2">ಯೇಸುವಿನ ಶಿಷ್ಯರಲ್ಲಿ ಕೆಲವರು ಅಶುದ್ಧ ಕೈಗಳಿಂದ, ಎಂದರೆ ಶುದ್ಧಾಚಾರಕ್ಕೆ ಅನುಗುಣವಾಗಿ ಕೈತೊಳೆದುಕೊಳ್ಳದೆ ಊಟಮಾಡುವುದನ್ನು ಅವರು ನೋಡಿದರು.</verse>
				<verse number="3">ಫರಿಸಾಯರು ಇತರ ಯೆಹೂದ್ಯರಂತೆ ಕೈಗಳನ್ನು ವಿಧಿಬದ್ಧವಾಗಿ ತೊಳೆಯದೆ ಊಟಮಾಡುವುದಿಲ್ಲ. ಇದು ಅವರ ಪೂರ್ವಜರಿಂದ ಬಂದ ಸಂಪ್ರದಾಯ.</verse>
				<verse number="4">ಪೇಟೆ ಬೀದಿಗಳಿಗೆ ಹೋಗಿ ಬಂದರೆ ಸ್ನಾನಮಾಡಿಯೇ ಊಟಮಾಡುವುದು; ತಂಬಿಗೆ, ಚೆಂಬು, ತಪ್ಪಲೆಗಳನ್ನು ಸೂತ್ರಬದ್ಧವಾಗಿ ತೊಳೆಯುವುದು; ಇವೇ ಮೊದಲಾದ ಅನೇಕ ಆಚಾರಗಳು ಅವರಲ್ಲಿ ರೂಢಿಯಲ್ಲಿದ್ದವು.</verse>
				<verse number="5">ಆದುದರಿಂದ ಫರಿಸಾಯರೂ ಧರ್ಮಶಾಸ್ತ್ರಿಗಳೂ, “ನಿನ್ನ ಶಿಷ್ಯರು ಪೂರ್ವಜರಿಂದ ಬಂದ ಆಚಾರಗಳನ್ನೇಕೆ ಅನುಸರಿಸುವುದಿಲ್ಲ? ಅಶುದ್ಧವಾದ ಕೈಗಳಿಂದಲೇ ಅವರು ಊಟಮಾಡುತ್ತಿದ್ದಾರಲ್ಲಾ?\ ಎಂದು ಯೇಸುವನ್ನು ಕೇಳಿದರು.</verse>
				<verse number="6">ಅದಕ್ಕೆ ಯೇಸು, “ಕಪಟಿಗಳೇ, ನಿಮ್ಮ ವಿಷಯದಲ್ಲಿ ಯೆಶಾಯನು ಎಷ್ಟೊಂದು ಚೆನ್ನಾಗಿ ಪ್ರವಾದಿಸಿದ್ದಾನೆ: ‘ಬರಿಯ ಮಾತಿನ ಮನ್ನಣೆಯನೀಯುತ, ಹೃದಯವನು ದೂರವಿರಿಸುತ, ನರಕಲ್ಪಿತ ಕಟ್ಟಳೆಗಳನೆ ದೇವವಾಕ್ಯವೆಂದು ಉಪದೇಶಿಸುತ, ಈ ಜನರೆನಗೆ ಮಾಡುವ ಆರಾಧನೆ ವ್ಯರ್ಥ! ಎಂದರು ದೇವರು.’</verse>
				<verse number="7"></verse>
				<verse number="8">“ನೀವು ದೇವರ ಆಜ್ಞೆಯನ್ನು ತೊರೆದು ಮಾನವನಿರ್ಮಿತ ಸಂಪ್ರದಾಯಗಳನ್ನು ನಿಷ್ಠೆಯಿಂದ ಪರಿಪಾಲಿಸುತ್ತಿದ್ದೀರಿ.</verse>
				<verse number="9">ಸಂಪ್ರದಾಯದ ನೆವದಲ್ಲಿ ದೇವರ ಆಜ್ಞೆಗಳನ್ನು ನೀವು ಜಾಣ್ಮೆಯಿಂದ ಬದಿಗೊತ್ತಿರುವುದು ಬಲು ಚೆನ್ನಾಗಿದೆ!</verse>
				<verse number="10">‘ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು; ತಂದೆಯನ್ನಾಗಲೀ ತಾಯಿಯನ್ನಾಗಲೀ ದೂಷಿಸುವವನಿಗೆ ಮರಣದಂಡನೆ ಆಗಲೇಬೇಕು,’ ಎಂಬುದು ಮೋಶೆ ವಿಧಿಸಿದ ಆಜ್ಞೆ.</verse>
				<verse number="11">ನೀವಾದರೋ, ಒಬ್ಬನು ತನ್ನ ತಂದೆಗೆ ಅಥವಾ ತಾಯಿಗೆ ‘ನನ್ನಿಂದ ನಿಮಗೆ ಸಲ್ಲತಕ್ಕದ್ದು “ಕೊರ್ಬಾನ್” (ಎಂದರೆ ದೇವರಿಗೆ ಮುಡಿಪು) ಎಂದು ಹೇಳಿಬಿಟ್ಟರೆ ಸಾಕು,</verse>
				<verse number="12">ಮುಂದೆ ಅವನು ತನ್ನ ತಂದೆತಾಯಿಗಳಿಗೆ ಯಾವ ಸಹಾಯವನ್ನೂ ಮಾಡುವುದಕ್ಕೆ ನೀವು ಬಿಡುವುದಿಲ್ಲ.</verse>
				<verse number="13">“ಹೀಗೆ ನೀವು ಬೋಧಿಸುವ ಸಂಪ್ರದಾಯಗಳಿಂದಾಗಿ ದೇವರ ವಾಕ್ಯವನ್ನೇ ನಿರರ್ಥಕಗೊಳಿಸುತ್ತೀರಿ. ಇಂಥಾ ಕೃತ್ಯಗಳು ಇನ್ನೆಷ್ಟೋ!” ಎಂದರು.</verse>
				<verse number="14">ಅನಂತರ ಯೇಸುಸ್ವಾಮಿ ಜನರ ಗುಂಪನ್ನು ತಮ್ಮ ಬಳಿಗೆ ಕರೆದು,</verse>
				<verse number="15">“ನಾನು ಹೇಳುವುದನ್ನು ನೀವೆಲ್ಲರೂ ಕೇಳಿ ಗ್ರಹಿಸಿಕೊಳ್ಳಿ: ಹೊರಗಿನಿಂದ ಮನುಷ್ಯನ ಒಳಗೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ.</verse>
				<verse number="16">ಮನುಷ್ಯನ ಅಂತರಂಗದಿಂದ ಹೊರಬರುವಂತಹುದೇ ಅವನನ್ನು ಕಲುಷಿತಗೊಳಿಸುತ್ತದೆ. (ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ)” ಎಂದರು.</verse>
				<verse number="17">ಯೇಸು ಜನರ ಗುಂಪನ್ನು ಬಿಟ್ಟು ಮನೆ ಸೇರಿದ ಬಳಿಕ ಶಿಷ್ಯರು, ಅವರ ಬಳಿಗೆ ಬಂದು ಆ ಸಾಮತಿಯ ಅರ್ಥವೇನೆಂದು ಕೇಳಿದರು.</verse>
				<verse number="18">ಅದಕ್ಕೆ ಅವರು, “ನೀವು ಕೂಡ ಮಂದಮತಿಗಳೋ? ನಿಮಗೂ ಇದು ಅರ್ಥವಾಗದೋ?</verse>
				<verse number="19">ಹೊರಗಿನಿಂದ ಮನುಷ್ಯನ ಒಳಕ್ಕೆ ಹೋಗುವ ಯಾವುದೂ ಅವನನ್ನು ಕಲುಷಿತಗೊಳಿಸುವುದಿಲ್ಲ. ಅವನು ತಿಂದದ್ದು ಅವನ ಹೃದಯವನ್ನು ಹೊಕ್ಕದೆ, ಹೊಟ್ಟೆಯನ್ನು ಮಾತ್ರ ಸೇರಿ, ಬಳಿಕ ದೇಹದಿಂದ ವಿಸರ್ಜಿತವಾಗುತ್ತದೆ. (ಹೀಗೆ ಆಹಾರ ಪದಾರ್ಥಗಳು ಯಾವುವೂ ಅಶುದ್ಧವಲ್ಲವೆಂದು ಯೇಸು ಸೂಚಿಸಿದರು.)</verse>
				<verse number="20">ಆದರೆ ಮನುಷ್ಯನ ಅಂತರಂಗದಿಂದ ಹೊರಹೊಮ್ಮುವ ಯೋಚನೆಗಳು ಅವನನ್ನು ಕಲುಷಿತಗೊಳಿಸುತ್ತವೆ.</verse>
				<verse number="21">ಮಾನವನ ಹೃದಯಾಂತರಾಳದಿಂದ ದುರಾಲೋಚನೆ, ಅನೈತಿಕತೆ, ಕಳ್ಳತನ, ಕೊಲೆ, ವ್ಯಭಿಚಾರ, ಲೋಭ,</verse>
				<verse number="22">ಕೆಡುಕುತನ, ಮೋಸ, ಭಂಡತನ, ಅಸೂಯೆ, ಅಪದೂರು, ಅಹಂಕಾರ, ಮೂರ್ಖತನ ಮೊದಲಾದವು ಹೊರಬರುತ್ತವೆ.</verse>
				<verse number="23">ಈ ಎಲ್ಲಾ ಕೇಡುಗಳು ಮಾನವನ ಅಂತರಂಗದಿಂದಲೇ ಉದ್ಭವಿಸಿ, ಅವನನ್ನು ಅಶುದ್ಧ ಮಾಡುತ್ತವೆ,” ಎಂದರು.</verse>
				<verse number="24">ಯೇಸುಸ್ವಾಮಿ ಅಲ್ಲಿಂದ ಹೊರಟು ಟೈರ್ ಹಾಗೂ ಸಿದೋನ್ ಪಟ್ಟಣಗಳ ಸಮೀಪವಿದ್ದ ಪ್ರದೇಶಕ್ಕೆ ಹೋಗಿ ಒಂದು ಮನೆಯಲ್ಲಿ ಇಳಿದುಕೊಂಡರು. ತಾವು ಜನರ ಕಣ್ಣಿಗೆ ಬೀಳಬಾರದೆಂಬುದು ಅವರ ಇಚ್ಛೆಯಾಗಿದ್ದರೂ ಅದು ಸಾಧ್ಯವಾಗಲಿಲ್ಲ.</verse>
				<verse number="25">ಹೊರನಾಡಾದ ಸಿರಿಯ ದೇಶದ ಫೆನಿಷ್ಯ ಪ್ರಾಂತ್ಯಕ್ಕೆ ಸೇರಿದ ಗ್ರೀಕ್ ಮಹಿಳೆ ಒಬ್ಬಳು ಅವರ ವಿಷಯವನ್ನು ಕೇಳಿ, ಒಡನೆ ಅಲ್ಲಿಗೆ ಬಂದು ಅವರ ಪಾದಕ್ಕೆರಗಿದಳು</verse>
				<verse number="26">ಆಕೆಯ‍ ಚಿಕ್ಕಮಗಳಿಗೆ ದೆವ್ವ ಹಿಡಿದಿತ್ತು. ತನ್ನ ಮಗಳಿಂದ ಪಿಶಾಚಿಯನ್ನು ಹೊರಗಟ್ಟಬೇಕೆಂದು ಆಕೆ ಯೇಸುವನ್ನು ಬೇಡಿಕೊಂಡಳು.</verse>
				<verse number="27">ಆದರೆ ಯೇಸು ಆಕೆಗೆ, “ಮೊದಲು ಮಕ್ಕಳು ತಿಂದು ತೃಪ್ತಿಪಡೆಯಲಿ, ಮಕ್ಕಳ ಆಹಾರವನ್ನು ನಾಯಿಗಳಿಗೆ ಎಸೆಯುವುದು ಸರಿಯಲ್ಲ,” ಎಂದರು.</verse>
				<verse number="28">ಅದಕ್ಕೆ ಆಕೆ, “ಅದು ನಿಜ ಸ್ವಾಮೀ; ಆದರೂ ಮಕ್ಕಳು ತಿಂದುಬಿಟ್ಟ ಚೂರುಪಾರುಗಳನ್ನು ಮೇಜಿನ ಕೆಳಗಿರುವ ನಾಯಿಗಳು ತಿನ್ನುತ್ತವಲ್ಲವೆ?” ಎಂದಳು.</verse>
				<verse number="29">ಆಕೆಯ ಮಾತುಗಳನ್ನು ಕೇಳಿ ಯೇಸು, “ಚೆನ್ನಾಗಿ ಹೇಳಿದೆ, ನಿಶ್ಚಿಂತೆಯಿಂದ ಮನೆಗೆ ಹಿಂದಿರುಗು. ದೆವ್ವ ನಿನ್ನ ಮಗಳನ್ನು ಬಿಟ್ಟು ತೊಲಗಿದೆ,” ಎಂದರು.</verse>
				<verse number="30">ಆಕೆ ಮನೆಗೆ ಹೋದಾಗ, ಮಗಳು ಹಾಸಿಗೆಯ ಮೇಲೆ ಸುಖವಾಗಿ ಮಲಗಿರುವುದನ್ನು ಕಂಡಳು. ದೆವ್ವ ಅವಳನ್ನು ಬಿಟ್ಟುಹೋಗಿತ್ತು.</verse>
				<verse number="31">ಯೇಸುಸ್ವಾಮಿ ಆ ಸ್ಥಳವನ್ನು ಬಿಟ್ಟು ಸಿದೋನಿನ ಮಾರ್ಗವಾಗಿ ದೆಕಪೊಲಿ ಪ್ರದೇಶವನ್ನು ಹಾದು ಗಲಿಲೇಯ ಸರೋವರದ ತೀರಕ್ಕೆ ಹಿಂದಿರುಗಿದರು.</verse>
				<verse number="32">ಮಾತನಾಡಲಾಗದ ಒಬ್ಬ ಕಿವುಡನನ್ನು ಜನರು ಅವರ ಬಳಿಗೆ ಕರೆತಂದರು. ಅವನ ಮೇಲೆ ಕೈಗಳನ್ನಿಡಬೇಕೆಂದು ಬೇಡಿಕೊಂಡರು.</verse>
				<verse number="33">ಯೇಸು ಅವನನ್ನು ಜನರ ಗುಂಪಿನಿಂದ ಪ್ರತ್ಯೇಕವಾಗಿ ಕರೆದೊಯ್ದು, ತಮ್ಮ ಬೆರಳುಗಳನ್ನು ಅವನ ಕಿವಿಯೊಳಗೆ ಇಟ್ಟರು.</verse>
				<verse number="34">ತಮ್ಮ ಉಗುಳಿನಿಂದ ಅವನ ನಾಲಗೆಯನ್ನು ಮುಟ್ಟಿದರು. ಬಳಿಕ ಸ್ವರ್ಗದತ್ತ ಕಣ್ಣೆತ್ತಿನೋಡಿ, ದೀರ್ಘವಾಗಿ ಉಸಿರೆಳೆದು, ‘ಎಪ್ಫಥಾ’ ಎಂದರೆ ‘ತೆರೆಯಲಿ’ ಎಂದರು.</verse>
				<verse number="35">ತಕ್ಷಣವೇ ಅವನ ಕಿವಿಗಳು ತೆರೆದವು; ನಾಲಗೆಯ ಬಿಗಿ ಸಡಿಲಗೊಂಡಿತು; ಅವನು ಸರಾಗವಾಗಿ ಮಾತನಾಡತೊಡಗಿದನು.</verse>
				<verse number="36">ಇದನ್ನು ಯಾರಿಗೂ ಹೇಳಕೂಡದೆಂದು ಯೇಸು ಜನರಿಗೆ ಕಟ್ಟಪ್ಪಣೆ ಮಾಡಿದರು. ಆದರೆ ಎಷ್ಟು ಹೇಳಿದರೂ ಕೇಳದೆ ಅವರು ಮತ್ತಷ್ಟು ಆಸಕ್ತಿಯಿಂದ ಈ ಕಾರ್ಯವನ್ನು ಪ್ರಚಾರಮಾಡಿದರು.</verse>
				<verse number="37">ಎಲ್ಲರೂ ಆಶ್ಚರ್ಯಭರಿತರಾಗಿ, “ಇವರು ಎಲ್ಲಾ ಕಾರ್ಯವನ್ನು ಚೆನ್ನಾಗಿ ಮಾಡುತ್ತಾರೆ; ಕಿವುಡರು ಕೇಳುವಂತೆಯೂ ಮೂಕರು ಮಾತನಾಡುವಂತೆಯೂ ಮಾಡುತ್ತಾರಲ್ಲಾ!” ಎಂದುಕೊಳ್ಳುತ್ತಿದ್ದರು.</verse>
			</chapter>
			<chapter number="8">
				<verse number="1">ಜನರು ಪುನಃ ದೊಡ್ಡ ಸಂಖ್ಯೆಯಲ್ಲಿ ಬಂದು ನೆರೆದಿದ್ದರು. ಊಟಮಾಡಲು ಅವರಲ್ಲಿ ಆಹಾರವಿರಲಿಲ್ಲ.</verse>
				<verse number="2">ಆಗ ಯೇಸುಸ್ವಾಮಿ ಶಿಷ್ಯರನ್ನು ಕರೆದು, “ಈ ಜನರು ಕಳೆದ ಮೂರು ದಿನಗಳಿಂದಲೂ ನನ್ನ ಬಳಿ ಇದ್ದಾರೆ; ಊಟಕ್ಕೆ ಇವರಲ್ಲಿ ಏನೂ ಇಲ್ಲ.</verse>
				<verse number="3">ಇವರನ್ನು ಕಂಡಾಗ ನನ್ನ ಹೃದಯ ಕರಗುತ್ತದೆ. ಬರೀ ಹೊಟ್ಟೆಯಲ್ಲಿ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಕೆಲವರಂತೂ ಬಹುದೂರದಿಂದ ಬಂದಿದ್ದಾರೆ,” ಎಂದರು.</verse>
				<verse number="4">ಅದಕ್ಕೆ ಶಿಷ್ಯರು, “ಇಷ್ಟು ದೊಡ್ಡ ಗುಂಪಿಗೆ ಆಗುವಷ್ಟು ರೊಟ್ಟಿಯನ್ನು ಈ ಅಡವಿಯಲ್ಲಿ ನಾವು ತರುವುದಾದರೂ ಎಲ್ಲಿಂದ?” ಎಂದು ಮರುನುಡಿದರು.</verse>
				<verse number="5">ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಲು ಅವರು, “ಏಳು ಇವೆ,” ಎಂದರು.</verse>
				<verse number="6">ಯೇಸು ಜನರ ಗುಂಪಿಗೆ ನೆಲದ ಮೇಲೆ ಕುಳಿತುಕೊಳ್ಳುವಂತೆ ಆಜ್ಞಾಪಿಸಿದರು. ಅನಂತರ ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಸಲ್ಲಿಸಿ, ಅವುಗಳನ್ನು ಮುರಿದು, ಜನರ ಗುಂಪಿಗೆ ಬಡಿಸಲು ಶಿಷ್ಯರಿಗೆ ಕೊಟ್ಟರು. ಅವರು ಬಡಿಸಿದರು.</verse>
				<verse number="7">ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು. ಯೇಸು ಅವುಗಳಿಗಾಗಿಯೂ ದೇವಸ್ತುತಿ ಮಾಡಿ ಅವುಗಳನ್ನು ಹಂಚಬೇಕೆಂದು ಆಜ್ಞಾಪಿಸಿದರು. ಜನರೆಲ್ಲರೂ ಉಂಡು ತೃಪ್ತರಾದರು.</verse>
				<verse number="8">ಉಳಿದ ರೊಟ್ಟಿಯ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಏಳು ಕುಕ್ಕೆಗಳ ತುಂಬ ಆದುವು.</verse>
				<verse number="9">ಊಟಮಾಡಿದವರ ಸಂಖ್ಯೆ ನಾಲ್ಕು ಸಾವಿರ.</verse>
				<verse number="10">ಊಟವಾದ ಬಳಿಕ ಯೇಸು ಜನರನ್ನು ಕಳುಹಿಸಿಕೊಟ್ಟು, ವಿಳಂಬಮಾಡದೆ ದೋಣಿಯನ್ನು ಹತ್ತಿ, ಶಿಷ್ಯರೊಡನೆ ದಲ್ಮನೂಥ ಎಂಬ ಪ್ರದೇಶಕ್ಕೆ ಹೋದರು.</verse>
				<verse number="11">ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, ಅವರೊಡನೆ ತರ್ಕಮಾಡಿ, ಅವರನ್ನು ಪರೀಕ್ಷಿಸುವ ಉದ್ದೇಶದಿಂದ: “ನೀನು ದೇವರಿಂದ ಬಂದವನೆಂಬುದನ್ನು ಸೂಚಿಸಲು ಒಂದು ಅದ್ಭುತವನ್ನು ಮಾಡಿತೋರಿಸು,” ಎಂದು ಕೇಳಿದರು.</verse>
				<verse number="12">ಇದನ್ನು ಕೇಳಿ ಯೇಸು, ಮನಸ್ಸಿನಲ್ಲೇ ನೊಂದುಕೊಂಡು, ನಿಟ್ಟುಸಿರಿಟ್ಟು, “ಈ ಪೀಳಿಗೆ ಅದ್ಭುತವನ್ನು ಸಂಕೇತವಾಗಿ ಅಪೇಕ್ಷಿಸುವುದೇಕೆ? ಇದಕ್ಕೆ ಅಂಥ ಯಾವ ಸಂಕೇತವನ್ನು ಕೊಡಲಾಗದು, ಇದು ಖಂಡಿತ,” ಎಂದರು.</verse>
				<verse number="13">ಅನಂತರ ಯೇಸು ಅವರನ್ನು ಬಿಟ್ಟು, ದೋಣಿಯನ್ನು ಹತ್ತಿ ಸರೋವರದ ಆಚೆದಡಕ್ಕೆ ಹೊರಟುಹೋದರು.</verse>
				<verse number="14">ಶಿಷ್ಯರು ಬುತ್ತಿಯನ್ನು ಕಟ್ಟಿಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಒಂದೇ ಒಂದು ರೊಟ್ಟಿಯಿತ್ತು.</verse>
				<verse number="15">ಯೇಸುಸ್ವಾಮಿ ಅವರಿಗೆ, “ಎಚ್ಚರಿಕೆ, ಫರಿಸಾಯರ ಹಾಗೂ ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ,” ಎಂದು ಹೇಳಿದರು.</verse>
				<verse number="16">ಇದನ್ನು ಕೇಳಿದ ಶಿಷ್ಯರು, “ನಮ್ಮಲ್ಲಿ ರೊಟ್ಟಿಯಿಲ್ಲದ್ದರಿಂದ ಹೀಗೆ ಹೇಳುತ್ತಿರಬಹುದೇ” ಎಂದು ಚರ್ಚಿಸತೊಡಗಿದರು.</verse>
				<verse number="17">ಆ ಚರ್ಚೆಯನ್ನು ಯೇಸು ಗಮನಿಸಿ, “ರೊಟ್ಟಿ ಇಲ್ಲವೆಂದು ಚರ್ಚೆ ಏಕೆ? ನಿಮಗೆ ಇನ್ನೂ ಅರಿವಾಗಲಿ, ಗ್ರಹಿಕೆಯಾಗಲಿ ಇಲ್ಲವೇ? ನೀವಿನ್ನೂ ಮಂದಮತಿಗಳಾಗಿರುವಿರೋ?</verse>
				<verse number="18">ಕಿವಿಗಳಿದ್ದೂ ಕೇಳಲಾರಿರಾ? ಕಣ್ಣುಗಳಿದ್ದೂ ನೋಡಲಾರಿರಾ?</verse>
				<verse number="19">ನಾನು ಐದು ರೊಟ್ಟಿಗಳಿಂದ ಐದುಸಾವಿರ ಜನರನ್ನು ತೃಪ್ತಿಪಡಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬಾ ಒಟ್ಟುಗೂಡಿಸಿದಿರಿ? ನಿಮಗೆ ಜ್ಞಾಪಕವಿಲ್ಲವೇ?” ಎಂದು ಕೇಳಿದರು. “ಹನ್ನೆರಡು ಬುಟ್ಟಿಗಳು” ಎಂದು ಅವರು ಉತ್ತರವಿತ್ತರು.</verse>
				<verse number="20">“ಅಲ್ಲದೆ ನಾನು ಏಳು ರೊಟ್ಟಿಗಳಿಂದ ನಾಲ್ಕು ಸಾವಿರ ಜನರನ್ನು ತೃಪ್ತಿಪಡಿಸಿದಾಗ ಎಷ್ಟು ಕುಕ್ಕೆ ತುಂಬಾ ರೊಟ್ಟಿಯ ತುಂಡುಗಳನ್ನು ಒಟ್ಟುಗೂಡಿಸಿದಿರಿ?” ಎಂದು ಪುನಃ ಅವರನ್ನು ಕೇಳಲು, “ಏಳು ಕುಕ್ಕೆಗಳು,” ಎಂದರು.</verse>
				<verse number="21">ಆಗ ಯೇಸು, “ಇಷ್ಟಾದರೂ, ನಿಮಗಿನ್ನೂ ತಿಳುವಳಿಕೆ ಇಲ್ಲವೆ?” ಎಂದರು.</verse>
				<verse number="22">ಯೇಸುಸ್ವಾಮಿ ಮತ್ತು ಅವರ ಶಿಷ್ಯರು ಬೆತ್ಸಾಯಿದಕ್ಕೆ ಬಂದರು. ಕೆಲವರು ಯೇಸುವಿನ ಬಳಿಗೆ ಕುರುಡನೊಬ್ಬನನ್ನು ಕರೆತಂದು ಅವನನ್ನು ಮುಟ್ಟಬೇಕೆಂದು ಬೇಡಿಕೊಂಡರು.</verse>
				<verse number="23">ಯೇಸು ಕುರುಡನ ಕೈಹಿಡಿದು, ಅವನನ್ನು ಊರ ಹೊರಗೆ ಕರೆದೊಯ್ದರು. ಅವನ ಮೇಲೆ ಕೈಯಿಟ್ಟು, “ನಿನಗೆ ಏನಾದರೂ ಕಾಣುತ್ತಿದೆಯೇ?’ ಎಂದು ಕೇಳಿದರು.</verse>
				<verse number="24">ಆಗ ಅವನು ಕಣ್ಣೆತ್ತಿ ನೋಡಿ, “ನನಗೆ ಮನುಷ್ಯರು ಮರಗಳಂತೆ ಕಾಣಿಸುತ್ತಾರೆ. ಆದರೂ ಅವರು ನಡೆದಾಡುತ್ತಿದ್ದಾರೆ,” ಎಂದನು.</verse>
				<verse number="25">ಯೇಸು ಪುನಃ ಅವನ ಕಣ್ಣುಗಳ ಮೇಲೆ ಕೈಯಿಟ್ಟರು. ಅವನು ಕಣ್ಣರಳಿಸಿ ನೋಡಿದಾಗ ಪೂರ್ಣ ದೃಷ್ಟಿಯನ್ನು ಹೊಂದಿದ್ದನು. ಎಲ್ಲವೂ ಅವನಿಗೆ ಸ್ಪಷ್ಟವಾಗಿ ಕಾಣಿಸಿತು.</verse>
				<verse number="26">ಅನಂತರ ಯೇಸು, “ನೀನು ಊರೊಳಗೆ ಹೋಗುವುದೇ ಬೇಡ,” ಎಂದು ಅವನಿಗೆ ಆಜ್ಞಾಪಿಸಿ, ಮನೆಗೆ ಕಳುಹಿಸಿಬಿಟ್ಟರು.</verse>
				<verse number="27">ಯೇಸುಸ್ವಾಮಿ ತಮ್ಮ ಶಿಷ್ಯರ ಸಂಗಡ ಫಿಲಿಪ್ಪನ ಸೆಜರೇಯ ಎಂಬ ಪಟ್ಟಣದ ಪಕ್ಕದಲ್ಲಿರುವ ಹಳ್ಳಿಗಳಿಗೆ ಪ್ರಯಾಣ ಬೆಳೆಸಿದರು. ದಾರಿಯಲ್ಲಿ, “ಜನರು ನನ್ನನ್ನು ಯಾರೆಂದು ಹೇಳುತ್ತಾರೆ?” ಎಂದು ಶಿಷ್ಯರನ್ನು ಕೇಳಿದರು.</verse>
				<verse number="28">ಅದಕ್ಕೆ ಶಿಷ್ಯರು, “ಕೆಲವರು ತಮ್ಮನ್ನು ‘ಸ್ನಾನಿಕ ಯೊವಾನ್ನ’ ಎನ್ನುತ್ತಾರೆ, ಇನ್ನು ಕೆಲವರು ‘ಎಲೀಯನು,’ ಮತ್ತೆ ಕೆಲವರು ಪ್ರವಾದಿಗಳಲ್ಲಿ ತಾವೂ ಒಬ್ಬರು ಎನ್ನುತ್ತಾರೆ' ” ಎಂದರು.</verse>
				<verse number="29">ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪ್ರಶ್ನಿಸಿದರು. ಅದಕ್ಕೆ ಪೇತ್ರನು, “ಅಭಿಷಿಕ್ತರಾದ ಲೋಕೋದ್ಧಾರಕ ತಾವೇ” ಎಂದು ಉತ್ತರವಿತ್ತನು.</verse>
				<verse number="30">ಆಗ ಯೇಸು, “ಈ ವಿಷಯವನ್ನು ಯಾರಿಗೂ ತಿಳಿಸಬೇಡಿ,” ಎಂದು ತಮ್ಮ ಶಿಷ್ಯರಿಗೆ ಕಟ್ಟಪ್ಪಣೆ ಮಾಡಿದರು.</verse>
				<verse number="31">ಈ ಘಟನೆಯ ಬಳಿಕ ಯೇಸುಸ್ವಾಮಿ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಪ್ರಧಾನ ಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು; ಆದರೆ ಮೂರನೇ ದಿನ ಪುನರುತ್ಥಾನ ಹೊಂದುವನು,” ಎಂದು ತಮ್ಮ ಶಿಷ್ಯರಿಗೆ ಮುಚ್ಚುಮರೆಯಿಲ್ಲದೆ ಬೋಧಿಸಲಾರಂಭಿಸಿದರು.</verse>
				<verse number="32">ಇದನ್ನು ಕೇಳಲಾಗದೇ ಪೇತ್ರನು ಅವರನ್ನು ಪ್ರತ್ಯೇಕವಾಗಿ ಕರೆದು, “ತಾವು ಹೀಗೆಲ್ಲಾ ಹೇಳಬಾರದು,” ಎಂದು ಪ್ರತಿಭಟಿಸಿದನು.</verse>
				<verse number="33">ಆಗ ಯೇಸು ಹಿಂದಕ್ಕೆ ತಿರುಗಿ, ತಮ್ಮ ಶಿಷ್ಯರನ್ನು ನೋಡಿ, ಪೇತ್ರನನ್ನು ಗದರಿಸುತ್ತಾ, “ಸೈತಾನನೇ, ತೊಲಗು ಇಲ್ಲಿಂದ; ನಿನ್ನ ಈ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದರು.</verse>
				<verse number="34">ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರನ್ನೂ ಜನರ ಗುಂಪನ್ನೂ ಒಟ್ಟಾಗಿ ತಮ್ಮ ಬಳಿಗೆ ಕರೆದು, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ;</verse>
				<verse number="35">ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು.</verse>
				<verse number="36">ಒಬ್ಬನು ಪ್ರಪಂಚವನ್ನೆಲ್ಲಾ ಗೆದ್ದು, ಪ್ರಾಣವನ್ನೇ ಕಳೆದುಕೊಂಡರೆ ಅದರಿಂದ ಬರುವ ಲಾಭವಾದರೂ ಏನು?</verse>
				<verse number="37">ಮನುಷ್ಯನು ತನ್ನ ಪ್ರಾಣಕ್ಕೆ ಈಡಾಗಿ ಏನನ್ನು ತಾನೇ ಕೊಡಬಲ್ಲನು?</verse>
				<verse number="38">ದೈವನಿಷ್ಠೆಯಿಲ್ಲದ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ ತನ್ನ ಪಿತನ ಪ್ರಭಾವದೊಡನೆ ದೇವದೂತರ ಪರಿವಾರ ಸಮೇತನಾಗಿ ಬರುವಾಗ, ನಾಚಿಕೆಪಡುವನು,” ಎಂದರು.</verse>
			</chapter>
			<chapter number="9">
				<verse number="1">ಪುನಃ ಯೇಸುಸ್ವಾಮಿ, ಅವರಿಗೆ “ಇಲ್ಲಿರುವವರಲ್ಲಿ ಕೆಲವರು ದೇವರ ಸಾಮ್ರಾಜ್ಯವು ಪ್ರಭಾವದೊಡನೆ ಜಗತ್ತಿನಲ್ಲಿ ಪ್ರತ್ಯಕ್ಷವಾಗುವುದನ್ನು ನೋಡದೆ ಮರಣಹೊಂದುವುದಿಲ್ಲ ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ,” ಎಂದು ಹೇಳಿದರು.</verse>
				<verse number="2">ಆರು ದಿನಗಳ ಬಳಿಕ ಪೇತ್ರ, ಯಕೋಬ ಮತ್ತು ಯೊವಾನ್ನ ಇವರನ್ನು ಮಾತ್ರ ತಮ್ಮೊಡನೆ ಕರೆದುಕೊಂಡು ಯೇಸುಸ್ವಾಮಿ ಎತ್ತರವಾದ ಒಂದು ಬೆಟ್ಟಕ್ಕೆ ಹೋದರು. ಅಲ್ಲಿ ಆ ಶಿಷ್ಯರ ಕಣ್ಣೆದುರಿಗೇ ಯೇಸು ರೂಪಾಂತರ ಹೊಂದಿದರು.</verse>
				<verse number="3">ಆಗ ಅವರ ಉಡುಪು ಅತ್ಯಂತ ಶುಭ್ರವಾಗಿ ಹೊಳೆಯಿತು. ಜಗದ ಯಾವ ಅಗಸನಿಂದಲೂ ಮಡಿಮಾಡಲಾಗದಷ್ಟು ಅದು ಬಿಳುಪಾಯಿತು.</verse>
				<verse number="4">ಮೋಶೆ ಮತ್ತು ಎಲೀಯ ಪ್ರತ್ಯಕ್ಷರಾಗಿ ಯೇಸುವಿನೊಡನೆ ಮಾತನಾಡುತ್ತಿದ್ದುದು ಶಿಷ್ಯರಿಗೆ ಕಾಣಿಸಿತು.</verse>
				<verse number="5">ಆಗ ಪೇತ್ರನು ಯೇಸುವಿಗೆ, “ಗುರುದೇವಾ, ನಾವು ಇಲ್ಲೇ ಇರುವುದು ಒಳ್ಳೆಯದು; ಅಪ್ಪಣೆಯಾಗಲಿ, ಮೂರು ಗುಡಾರಗಳನ್ನು ಕಟ್ಟುವೆವು; ತಮಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು,” ಎಂದನು.</verse>
				<verse number="6">ಪೇತ್ರನಿಗೆ ತಾನು ಏನು ಹೇಳುತ್ತಿದ್ದೇನೆಂದೇ ತಿಳಿಯಲಿಲ್ಲ. ಶಿಷ್ಯರು ಅಷ್ಟು ಭಯಭ್ರಾಂತ ಆಗಿದ್ದರು!</verse>
				<verse number="7">ಅಷ್ಟರಲ್ಲಿ ಮೇಘವೊಂದು ಅವರನ್ನು ಆವರಿಸಿತು. ಅದರೊಳಗಿಂದ, “ಈತನು ನನ್ನ ಪುತ್ರ, ನನಗೆ ಪರಮಪ್ರಿಯನು, ಈತನ ಮಾತಿಗೆ ಕಿವಿಗೊಡಿ,” ಎಂಬ ವಾಣಿ ಕೇಳಿಸಿತು.</verse>
				<verse number="8">ತಕ್ಷಣ, ಶಿಷ್ಯರು ಸುತ್ತಲೂ ನೋಡಲು ತಮ್ಮೊಂದಿಗೆ ಯೇಸುವೊಬ್ಬರನ್ನೇ ಹೊರತು ಬೇರೆ ಯಾರನ್ನೂ ಕಾಣಲಿಲ್ಲ.</verse>
				<verse number="9">ಅನಂತರ ಯೇಸು ಮತ್ತು ಅವರ ಶಿಷ್ಯರು ಬೆಟ್ಟದಿಂದ ಇಳಿದುಬರುವಾಗ, “ನರಪುತ್ರನು ಸತ್ತು ಪುನರುತ್ಥಾನ ಹೊಂದುವ ತನಕ ನೀವು ಕಂಡದ್ದನ್ನು ಯಾರಿಗೂ ಹೇಳಬೇಡಿ,” ಎಂದು ಆಜ್ಞಾಪಿಸಿದರು.</verse>
				<verse number="10">ಅಂತೆಯೇ ಶಿಷ್ಯರು ಇದನ್ನು ಯಾರಿಗೂ ಹೇಳಲಿಲ್ಲ; ಆದರೂ ‘ಸತ್ತು ಪುನರುತ್ಥಾನ ಹೊಂದುವುದು’ ಎಂದರೆ ಏನು? ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಂಡರು.</verse>
				<verse number="11">ಅನಂತರ, “ಎಲೀಯನು ಮೊದಲು ಬರಬೇಕಾದುದು ಅಗತ್ಯವೆಂದು ಶಾಸ್ತ್ರಜ್ಞರು ಹೇಳುತ್ತಾರಲ್ಲಾ, ಅದು ಹೇಗೆ?” ಎಂದು ಶಿಷ್ಯರು ಯೇಸುವನ್ನು ಕೇಳಿದರು.</verse>
				<verse number="12">ಅದಕ್ಕೆ ಅವರು, “ ‘ಎಲೀಯನು ಮೊದಲು ಬಂದು ಎಲ್ಲವನ್ನೂ ಸಜ್ಜುಗೊಳಿಸುವನೆಂಬುದೇನೋ ನಿಜ. ಆದರೂ ನರಪುತ್ರನು ಜನರಿಂದ ತೀವ್ರಯಾತನೆಯನ್ನು ಅನುಭವಿಸಿ ಅವರಿಂದ ತಿರಸ್ಕೃತನಾಗಬೇಕು,’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆಯಲ್ಲವೆ; ಇದು ಹೇಗೆ?</verse>
				<verse number="13">ಆದರೆ ನಾನು ನಿಮಗೆ ಹೇಳುವುದೇನೆಂದರೆ, ‘ಎಲೀಯನು ಬಂದಾಗಿದೆ; ಆತನ ವಿಷಯವಾಗಿ ಮೊದಲೇ ಬರೆದಿರುವಂತೆ ಜನರು ತಮ್ಮ ಇಚ್ಛಾನುಸಾರ ಆತನನ್ನು ಹಿಂಸಿಸಿದ್ದೂ ಆಗಿದೆ’,” ಎಂದರು.</verse>
				<verse number="14">ಅವರೆಲ್ಲರೂ ಹಿಂದಿರುಗಿ ಬಂದಾಗ ಉಳಿದ ಶಿಷ್ಯರ ಸುತ್ತಲೂ ಜನರು ದೊಡ್ಡ ಗುಂಪಾಗಿ ನೆರೆದಿರುವುದನ್ನು ಧರ್ಮಶಾಸ್ತ್ರಿಗಳು ಇವರೊಡನೆ ವಾದಿಸುತ್ತಿರುವುದನ್ನು ಕಂಡರು.</verse>
				<verse number="15">ನೆರೆದಿದ್ದ ಜನರು ಯೇಸುವನ್ನು ಕಂಡೊಡನೆ ಆಶ್ಚರ್ಯಪಟ್ಟು ಓಡಿಬಂದು, ಅವರಿಗೆ ನಮಸ್ಕರಿಸಿದರು.</verse>
				<verse number="16">ಯೇಸುಸ್ವಾಮಿ, “ನಿಮ್ಮ ವಾಗ್ವಾದ ಏನು?” ಎಂದು ಕೇಳಿದರು.</verse>
				<verse number="17">ಆ ಗುಂಪಿನಲ್ಲಿದ್ದ ಒಬ್ಬನು, “ಬೋಧಕರೇ, ನನ್ನ ಮಗನನ್ನು ತಮ್ಮ ಬಳಿಗೆಂದು ಕರೆತಂದೆ.</verse>
				<verse number="18">ಅವನಿಗೆ ಒಂದು ಮೂಕದೆವ್ವ ಹಿಡಿದಿದೆ. ಅವನ ಮೇಲೆ ಅದು ಬಂದಾಗಲೆಲ್ಲಾ ಅವನನ್ನು ನೆಲಕ್ಕೆ ಅಪ್ಪಳಿಸುತ್ತದೆ. ಅವನು ನೊರೆಕಾರುತ್ತಾ ಹಲ್ಲು ಕಡಿದುಕೊಳ್ಳುತ್ತಾನೆ. ಆಗ ಅವನ ದೇಹವೆಲ್ಲಾ ಮರಗಟ್ಟಿದಂತಾಗುತ್ತದೆ. ಆ ದೆವ್ವವನ್ನು ಬಿಡಿಸಬೇಕೆಂದು ತಮ್ಮ ಶಿಷ್ಯರನ್ನು ಕೇಳಿಕೊಂಡೆ. ಆದರೆ, ಅದು ಅವರಿಂದಾಗಲಿಲ್ಲ,” ಎಂದನು.</verse>
				<verse number="19">ಇದನ್ನು ಕೇಳಿ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ಪೀಳಿಗೆಯೇ, ಇನ್ನೆಷ್ಟು ಕಾಲ ನಿಮ್ಮೊಂದಿಗಿರಲಿ! ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ! ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ,” ಎಂದರು.</verse>
				<verse number="20">ಆಗ ಆ ಹುಡುಗನನ್ನು ಯೇಸುವಿನ ಬಳಿಗೆ ಕರೆತಂದರು. ಯೇಸುವನ್ನು ನೋಡಿದಾಕ್ಷಣ ಆ ದೆವ್ವ ಹುಡುಗನನ್ನು ನೆಲಕ್ಕೆ ಅಪ್ಪಳಿಸಿ ಒದ್ದಾಡಿಸಿತು. ಹುಡುಗ ಹೊರಳಾಡುತ್ತಾ ನೊರೆಕಾರಿದನು.</verse>
				<verse number="21">ಯೇಸು, “ಇವನಿಗೆ ಎಷ್ಟು ದಿನದಿಂದ ಹೀಗಾಗುತ್ತಿದೆ?” ಎಂದು ಹುಡುಗನ ತಂದೆಯನ್ನು ವಿಚಾರಿಸಿದರು. ಅದಕ್ಕೆ ಅವನು “ಬಾಲ್ಯದಿಂದಲೇ ಹೀಗಾಗುತ್ತಿದೆ; ಇದಲ್ಲದೆ ದೆವ್ವವು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಗೂ ನೀರಿಗೂ ದೂಡಿದೆ;</verse>
				<verse number="22">ತಮ್ಮಿಂದ ಏನಾದರೂ ಸಾಧ್ಯವಾದರೆ, ನಮ್ಮ ಮೇಲೆ ದಯವಿಟ್ಟು ಸಹಾಯಮಾಡಿ,” ಎಂದು ಯೇಸುವನ್ನು ಬೇಡಿಕೊಂಡನು.</verse>
				<verse number="23">ಅದಕ್ಕೆ ಯೇಸು, “ ‘ಸಾಧ್ಯವಾದರೆ’ ಎನ್ನುತ್ತೀಯಲ್ಲಾ? ದೇವರಲ್ಲಿ ವಿಶ್ವಾಸ ಇಡುವವನಿಗೆ ಎಲ್ಲವೂ ಸಾಧ್ಯ!” ಎಂದರು.</verse>
				<verse number="24">ಆಗ ಆ ಬಾಲಕನ ತಂದೆ, “ನಾನು ವಿಶ್ವಾಸಿಸುತ್ತೇನೆ, ನನ್ನ ವಿಶ್ವಾಸದಲ್ಲಿ ಕೊರತೆಯಿದ್ದರೆ ನೆರವು ನೀಡಿ,” ಎಂದು ಯೇಸುವಿಗೆ ಮೊರೆಯಿಟ್ಟನು.</verse>
				<verse number="25">ಜನಸಂದಣಿ ಬೆಳೆಯುತ್ತಿರುವುದನ್ನು ಕಂಡ ಯೇಸು, ಆ ದೆವ್ವವನ್ನು ಗದರಿಸಿ, “ಎಲೈ, ಕಿವುಡು ಮೂಕ ದೆವ್ವವೇ, ಇವನನ್ನು ಬಿಟ್ಟು ತೊಲಗು; ಇನ್ನೆಂದಿಗೂ ಇವನೊಳಗೆ ಪ್ರವೇಶಿಸಕೂಡದೆಂದು ನಿನಗೆ ಆಜ್ಞಾಪಿಸುತ್ತೇನೆ,” ಎಂದರು.</verse>
				<verse number="26">ದೆವ್ವವು ಚೀರುತ್ತಾ, ಹುಡುಗನನ್ನು ವಿಲವಿಲನೆ ಒದ್ದಾಡಿಸಿ, ಕೊನೆಗೆ ಬಿಟ್ಟುಹೋಯಿತು. ಹುಡುಗನು ಶವದಂತಾದನು. ಅಲ್ಲಿದ್ದವರಲ್ಲಿ ಅನೇಕರು ‘ಹುಡುಗ ಸತ್ತುಹೋದ,’ ಎಂದುಕೊಂಡರು.</verse>
				<verse number="27">ಆದರೆ ಯೇಸು ಅವನ ಕೈಹಿಡಿದು ಎತ್ತಲು ಅವನು ಎದ್ದುನಿಂತನು.</verse>
				<verse number="28">ಅಂದು ಯೇಸುಸ್ವಾಮಿ ಮನೆಗೆ ಬಂದಾಗ, ಶಿಷ್ಯರು ಪ್ರತ್ಯೇಕವಾಗಿ ಅವರ ಬಳಿಗೆ ಬಂದು, “ಆ ದೆವ್ವವನ್ನು ಹೊರಗಟ್ಟಲು ನಮ್ಮಿಂದೇಕೆ ಆಗಲಿಲ್ಲ?” ಎಂದು ಕೇಳಿದರು.</verse>
				<verse number="29">ಅದಕ್ಕೆ ಯೇಸು, “ಈ ಬಗೆಯ ದೆವ್ವವನ್ನು ಹೊರಗಟ್ಟಲು ಪ್ರಾರ್ಥನೆಯೇ ಹೊರತು ಬೇರೆ ಮಾರ್ಗವಿಲ್ಲ,” ಎಂದರು.</verse>
				<verse number="30">ಯೇಸುಸ್ವಾಮಿ ಮತ್ತು ಶಿಷ್ಯರು ಹೊರಟು ಗಲಿಲೇಯ ಮಾರ್ಗವಾಗಿ ಮುಂದಕ್ಕೆ ಪ್ರಯಾಣ ಮಾಡಿದರು. ಇದು ಯಾರಿಗೂ ತಿಳಿಯಬಾರದು ಎಂಬುದು ಯೇಸುವಿನ ಇಚ್ಛೆಯಾಗಿತ್ತು.</verse>
				<verse number="31">ಕಾರಣ, ತಮ್ಮ ಶಿಷ್ಯರಿಗೆ ಪ್ರಬೋಧಿಸುವುದರಲ್ಲಿ ಅವರು ನಿರತರಾಗಿದ್ದರು. “ನರಪುತ್ರನನ್ನು ಜನರ ವಶಕ್ಕೆ ಒಪ್ಪಿಸಲಾಗುವುದು. ಅವರು ಆತನನ್ನು ಕೊಲ್ಲುವರು. ಕೊಂದ ಮೂರನೆಯ ದಿನ ಆತನು ಪುನರುತ್ಥಾನ ಹೊಂದುವನು,” ಎಂದು ಯೇಸು ಅವರಿಗೆ ತಿಳಿಸಿದರು.</verse>
				<verse number="32">ಆದರೆ ಯೇಸು ಹೇಳಿದ ಈ ಮಾತುಗಳನ್ನು ಶಿಷ್ಯರು ಅರ್ಥಮಾಡಿಕೊಳ್ಳಲಿಲ್ಲ. ಅವುಗಳ ಬಗ್ಗೆ ಪ್ರಶ್ನಿಸಲು ಸಹ ಅಂಜಿದರು.</verse>
				<verse number="33">ಅನಂತರ ಅವರೆಲ್ಲರೂ ಕಫೆರ್ನವುಮಿಗೆ ಬಂದರು. ಮನೆ ಸೇರಿದಾಗ ಯೇಸುಸ್ವಾಮಿ, “ದಾರಿಯಲ್ಲಿ ಬರುತ್ತಾ ನೀವು ನಿಮ್ಮಲ್ಲೇ ಏನು ಚರ್ಚೆಮಾಡುತ್ತಿದ್ದಿರಿ?” ಎಂದು ಶಿಷ್ಯರನ್ನು ಕೇಳಿದರು. ಅವರು ಮೌನತಾಳಿದರು.</verse>
				<verse number="34">ಏಕೆಂದರೆ, ತಮ್ಮಲ್ಲಿ ಯಾವನು ಅತಿ ಶ್ರೇಷ್ಠನು ಎಂದು ತಮ್ಮ ತಮ್ಮಲ್ಲೇ ವಾದಿಸುತ್ತಾ ಬಂದಿದ್ದರು.</verse>
				<verse number="35">ಯೇಸು ಕುಳಿತುಕೊಂಡು, ಹನ್ನೆರಡು ಮಂದಿಯನ್ನೂ ಕರೆದು, ಅವರಿಗೆ, ‘ನಿಮ್ಮಲ್ಲಿ ಮೊದಲಿಗನಾಗ ಬಯಸುವವನು ಎಲ್ಲರಿಗೂ ಕಡೆಯವನಾಗಿರಲಿ; ಎಲ್ಲರ ಸೇವೆ ಮಾಡುವವನಾಗಿ ಇರಲಿ,’ ಎಂದರು.</verse>
				<verse number="36">ಅನಂತರ ಯೇಸು, ಒಂದು ಚಿಕ್ಕ ಮಗುವನ್ನು ಕರೆದು ಅವರ ನಡುವೆ ನಿಲ್ಲಿಸಿ, ಅದನ್ನು ತಬ್ಬಿಕೊಂಡು ತಮ್ಮ ಶಿಷ್ಯರಿಗೆ,</verse>
				<verse number="37">“ನನ್ನ ಹೆಸರಿನಲ್ಲಿ ಇಂಥ ಮಗುವೊಂದನ್ನು ಯಾರು ಬರಮಾಡಿಕೊಳ್ಳುತ್ತಾನೋ ಅವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ; ಯಾರು ನನ್ನನ್ನು ಬರಮಾಡಿಕೊಳ್ಳುತ್ತಾನೋ ಅವನು ನನ್ನನ್ನು ಅಲ್ಲ, ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆ,” ಎಂದರು.</verse>
				<verse number="38">ಯೊವಾನ್ನನು ಯೇಸುಸ್ವಾಮಿಗೆ, “ಗುರುವೇ, ಯಾರೋ ಒಬ್ಬನು ತಮ್ಮ ಹೆಸರಿನಲ್ಲಿ ದೆವ್ವಬಿಡಿಸುವುದನ್ನು ಕಂಡೆವು. ಅವನು ನಮ್ಮವನಲ್ಲ. ಆದಕಾರಣ ಅವನನ್ನು ತಡೆದೆವು,” ಎಂದನು.</verse>
				<verse number="39">ಅದಕ್ಕೆ ಯೇಸು, “ಅವನನ್ನು ತಡೆಯಬೇಡಿ, ನನ್ನ ಹೆಸರಿನಲ್ಲಿ ಅದ್ಭುತ ಮಾಡುವವನು ಮರುಕ್ಷಣವೇ ನನ್ನ ವಿಷಯವಾಗಿ ಅಪಪ್ರಚಾರ ಮಾಡನು.</verse>
				<verse number="40">ನಮಗೆ ವಿರೋಧಿ ಅಲ್ಲದವನು ನಮ್ಮ ಪರವಾದಿ.</verse>
				<verse number="41">ನೀವು ಕ್ರಿಸ್ತಭಕ್ತರು ಎಂದು ಯಾವನಾದರೂ ನಿಮಗೆ ಕುಡಿಯಲು ಒಂದು ಲೋಟ ನೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಅವನು ತಪ್ಪದೆ ಪಡೆಯುವನು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.</verse>
				<verse number="42">ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ನನ್ನಲ್ಲಿ ವಿಶ್ವಾಸ ಇಟ್ಟಿರುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಪಾಪಕ್ಕೆ ಕಾರಣನಾದರೆ, ಅಂಥವನ ಕೊರಳಿಗೆ ದೊಡ್ಡ ಬೀಸುಕಲ್ಲನ್ನು ಕಟ್ಟಿ, ಅವನನ್ನು ಸಮುದ್ರದಲ್ಲಿ ದಬ್ಬುವುದೇ ಅವನಿಗೆ ಲೇಸು.</verse>
				<verse number="43">ನಿನ್ನ ಕೈ ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿಹಾಕು;</verse>
				<verse number="44">ಎರಡು ಕೈಗಳಿದ್ದು ನರಕದ ಆರದ ಬೆಂಕಿಗೆ ಗುರಿಯಾಗುವುದಕ್ಕಿಂತ ಅಂಗಹೀನನಾಗಿ ಅಮರಜೀವವನ್ನು ಪಡೆಯುವುದೇ ಲೇಸು.</verse>
				<verse number="45">ನಿನ್ನ ಕಾಲು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕತ್ತರಿಸಿಹಾಕು.</verse>
				<verse number="46">ಎರಡು ಕಾಲುಳ್ಳವನಾಗಿ ನರಕಕ್ಕೆ ತಳ್ಳಿಸಿಕೊಳ್ಳುವುದಕ್ಕಿಂತ ಕುಂಟನಾಗಿ ಅಮರಜೀವವನ್ನು ಪಡೆಯುವುದೇ ಲೇಸು.</verse>
				<verse number="47">ನಿನ್ನ ಕಣ್ಣು ನಿನಗೆ ಪಾಪಕ್ಕೆ ಕಾರಣವಾದರೆ ಅದನ್ನು ಕಿತ್ತುಹಾಕು. ಎರಡು ಕಣ್ಣುಳ್ಳವನಾಗಿ ನರಕಕ್ಕೆ ತಳ್ಳಿಸಿಕೊಳ್ಳುವುದಕ್ಕಿಂತ ಒಕ್ಕಣ್ಣನಾಗಿ ದೇವರ ಸಾಮ್ರಾಜ್ಯ ಸೇರುವುದೇ ಲೇಸು.</verse>
				<verse number="48">ನರಕದಲ್ಲಿ ಅವರನ್ನು ಕಡಿಯುವ ಹುಳ ಸಾಯದು, ಸುಡುವ ಬೆಂಕಿ ಆರದು.</verse>
				<verse number="49">ಊಟಕ್ಕೆ ಉಪ್ಪಿನಂತೆ ಪ್ರತಿಯೊಬ್ಬನಿಗೆ ಅಗ್ನಿಪರೀಕ್ಷೆ ಅವಶ್ಯಕ.</verse>
				<verse number="50">ಉಪ್ಪೇನೋ ಪ್ರಯೋಜನಕರ. ಆದರೆ ಉಪ್ಪೇ ಸಪ್ಪೆಯಾದರೆ, ಇನ್ನು ಯಾವುದರಿಂದ ಅದನ್ನು ಪುನಃ ರುಚಿಗೊಳಿಸಲಾದೀತು? ನೀವು ಉಪ್ಪಿನಂತೆ ಒಬ್ಬರಿಗೊಬ್ಬರು ಒಪ್ಪಿಗೆಯಾಗಿ ಸಮಾಧಾನದಿಂದಿರಿ,” ಎಂದರು.</verse>
			</chapter>
			<chapter number="10">
				<verse number="1">ಅಲ್ಲಿಂದ ಯೇಸುಸ್ವಾಮಿ ಜೋರ್ಡನ್ ನದಿಯ ಆಚೆಕಡೆಯಿದ್ದ ಜುದೇಯ ಪ್ರಾಂತ್ಯಕ್ಕೆ ಬಂದರು. ಅಲ್ಲಿಯೂ ಜನರು ಗುಂಪುಗುಂಪಾಗಿ ಅವರ ಬಳಿಗೆ ಬಂದರು. ಯೇಸು ಅವರಿಗೂ ಉಪದೇಶಮಾಡಿದರು.</verse>
				<verse number="2">ಫರಿಸಾಯರಲ್ಲಿ ಕೆಲವರು, ಅವರನ್ನು ಮಾತಿನಲ್ಲಿ ಸಿಕ್ಕಿಸುವ ಉದ್ದೇಶದಿಂದ, “ಗಂಡನು ತನ್ನ ಹೆಂಡತಿಯನ್ನು ಬಿಟ್ಟುಬಿಡುವುದು ಧರ್ಮಸಮ್ಮತವೇ?” ಎಂದು ಕೇಳಿದರು.</verse>
				<verse number="3">ಯೇಸು, “ಈ ವಿಷಯವಾಗಿ ಮೋಶೆ ನಿಮಗೆ ಏನೆಂದು ವಿಧಿಸಿದ್ದಾನೆ?” ಎಂದು ಅವರನ್ನೇ ಪುನಃ ಪ್ರಶ್ನಿಸಿದರು.</verse>
				<verse number="4">ಅದಕ್ಕೆ ಅವರು, “ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಹೆಂಡತಿಯನ್ನು ಬಿಟ್ಟುಬಿಡಲು ಮೋಶೆ ಅನುಮತಿ ಇತ್ತಿದ್ದಾನೆ,” ಎಂದರು.</verse>
				<verse number="5">ಆಗ ಯೇಸು, “ನಿಮ್ಮ ಹೃದಯ ಕಲ್ಲಾಗಿ ಇದ್ದುದರಿಂದಲೇ ಮೋಶೆ ಈ ನಿಯಮವನ್ನು ಬರೆದಿಟ್ಟನು.</verse>
				<verse number="6">ಆದರೆ ಸೃಷ್ಟಿಯ ಆರಂಭದಿಂದಲೇ ‘ದೇವರು ಮನುಷ್ಯರನ್ನು ಗಂಡುಹೆಣ್ಣಾಗಿ ನಿರ್ಮಿಸಿದ್ದಾರೆ.</verse>
				<verse number="7">ಈ ಕಾರಣದಿಂದ ಗಂಡನು ತಂದೆತಾಯಿಗಳನ್ನು ಬಿಟ್ಟು, ತನ್ನ ಹೆಂಡತಿಯನ್ನು ಕೂಡಿಕೊಂಡು ಅವರಿಬ್ಬರೂ ಒಂದಾಗಿ ಬಾಳುವರು’ ಎನ್ನುತ್ತದೆ ಪವಿತ್ರಗ್ರಂಥ.</verse>
				<verse number="8">ಹೀಗಿರುವಲ್ಲಿ ಇನ್ನು ಮುಂದೆ ಅವರು ಇಬ್ಬರಲ್ಲ, ಒಂದೇ ಶರೀರ.</verse>
				<verse number="9">ಆದುದರಿಂದ ದೇವರು ಒಂದುಗೂಡಿಸಿದ್ದನ್ನು ಮನುಷ್ಯರು ಬೇರ್ಪಡಿಸದಿರಲಿ,” ಎಂದರು.</verse>
				<verse number="10">ಅಂದು, ಮನೆಗೆ ಹೋದ ಬಳಿಕ ಶಿಷ್ಯರು, ಅದೇ ವಿಷಯವಾಗಿ ಯೇಸುವನ್ನು ವಿಚಾರಿಸಿದರು.</verse>
				<verse number="11">ಅದಕ್ಕೆ ಅವರು, “ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಯಾಗುವವನು ಆಕೆಗೆ ದ್ರೋಹಬಗೆದು ವ್ಯಭಿಚಾರಿಯಾಗುತ್ತಾನೆ.</verse>
				<verse number="12">ಅಂತೆಯೇ ಗಂಡನನ್ನು ಬಿಟ್ಟು ಮತ್ತೊಬ್ಬನನ್ನು ವಿವಾಹವಾಗುವವಳು ವ್ಯಭಿಚಾರಿಣಿಯಾಗುತ್ತಾಳೆ,” ಎಂದರು.</verse>
				<verse number="13">ಕೆಲವರು, ತಮ್ಮ ಚಿಕ್ಕಮಕ್ಕಳನ್ನು ಮುಟ್ಟಿ ಹರಸಲೆಂದು ಅವುಗಳನ್ನು ಯೇಸುಸ್ವಾಮಿಯ ಬಳಿಗೆ ಕರೆತಂದರು. ಶಿಷ್ಯರು ಆ ಜನರನ್ನು ಗದರಿಸಿದರು.</verse>
				<verse number="14">ಇದನ್ನು ಕಂಡ ಯೇಸು ಸಿಟ್ಟುಗೊಂಡು ಶಿಷ್ಯರಿಗೆ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ. ಅವರನ್ನು ತಡೆಯಬೇಡಿ; ದೇವರ ಸಾಮ್ರಾಜ್ಯ ಇಂಥವರದೇ.</verse>
				<verse number="15">ದೇವರ ಸಾಮ್ರಾಜ್ಯವನ್ನು ಶಿಶುಭಾವದಿಂದ ಅಂಗೀಕರಿಸದೆ ಇರುವವನು ಅದನ್ನು ಎಂದಿಗೂ ಸೇರಲಾರನು. ಇದು ನಿಶ್ಚಯ,” ಎಂದರು.</verse>
				<verse number="16">ಅನಂತರ ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಗಳನ್ನಿರಿಸಿ ಹರಸಿದರು.</verse>
				<verse number="17">ಅಲ್ಲಿಂದ ಯೇಸುಸ್ವಾಮಿ ಪ್ರಯಾಣವನ್ನು ಮುಂದುವರಿಸಿದರು. ದಾರಿಯಲ್ಲಿ ಒಬ್ಬನು ಅವರ ಬಳಿಗೆ ಓಡಿಬಂದು ಮೊಣಕಾಲೂರಿ, “ಒಳ್ಳೆಯ ಗುರುವೇ, ಅಮರಜೀವವು ನನಗೆ ಪ್ರಾಪ್ತಿಯಾಗಬೇಕಾದರೆ ನಾನೇನು ಮಾಡಬೇಕು?” ಎಂದು ಕೇಳಿದನು.</verse>
				<verse number="18">“ನೀನು ನನ್ನನ್ನು ಒಳ್ಳೆಯವನೆಂದು ಕರೆಯುವುದೇಕೆ? ದೇವರೊಬ್ಬರನ್ನು ಬಿಟ್ಟರೆ ಬೇರೆ ಯಾರೂ ಒಳ್ಳೆಯವರಲ್ಲ. ದೈವಾಜ್ಞೆಗಳು ನಿನಗೆ ತಿಳಿದೇ ಇವೆ:</verse>
				<verse number="19">ನರಹತ್ಯೆ ಮಾಡಬೇಡ, ವ್ಯಭಿಚಾರ ಮಾಡಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ಮೋಸಮಾಡಬೇಡ, ನಿನ್ನ ತಂದೆತಾಯಿಗಳನ್ನು ಗೌರವಿಸು,” ಎಂದು ಯೇಸು ಉತ್ತರವಿತ್ತರು.</verse>
				<verse number="20">ಅದಕ್ಕೆ ಅವನು, “ಗುರುದೇವಾ, ನಾನು ಬಾಲ್ಯದಿಂದಲೇ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ,” ಎಂದು ಹೇಳಿದನು.</verse>
				<verse number="21">ಆಗ ಯೇಸು ಅವನನ್ನು ಮಮತೆಯಿಂದ ಈಕ್ಷಿಸಿ, “ನೀನು ಮಾಡಬೇಕಾದ ಕಾರ್ಯವೊಂದು ಬಾಕಿಯಿದೆ. ಹೋಗು, ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.</verse>
				<verse number="22">ಯೇಸುವಿನ ಈ ಮಾತನ್ನು ಕೇಳುತ್ತಲೇ ಅವನ ಮುಖ ಪೆಚ್ಚಾಯಿತು. ಅವನು ಖಿನ್ನಮನಸ್ಕನಾಗಿ ಅಲ್ಲಿಂದ ಹೊರಟುಹೋದನು. ಏಕೆಂದರೆ ಅವನಿಗೆ ಅಪಾರ ಆಸ್ತಿಯಿತ್ತು.</verse>
				<verse number="23">ಆಗ ಯೇಸುಸ್ವಾಮಿ ಸುತ್ತಲೂ ನೋಡಿ, ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಐಶ್ವರ್ಯವುಳ್ಳವರಿಗೆ ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದು ಎಷ್ಟೊಂದು ಕಷ್ಟ!” ಎಂದರು.</verse>
				<verse number="24">ಅವರ ಈ ಮಾತನ್ನು ಕೇಳಿದ ಶಿಷ್ಯರು ಬೆರಗಾದರು. ಯೇಸು ಪುನಃ ಅವರಿಗೆ, “ಮಕ್ಕಳೇ, ದೇವರ ಸಾಮ್ರಾಜ್ಯವನ್ನು ಸೇರುವುದು ಎಷ್ಟು ಕಷ್ಟ!</verse>
				<verse number="25">ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಸೇರುವುದಕ್ಕಿಂತಲೂ ಒಂಟೆಯು ಸೂಜಿಗಣ್ಣಲ್ಲಿ ನುಸುಳುವುದು ಸುಲಭ,” ಎಂದರು.</verse>
				<verse number="26">ಇದನ್ನು ಕೇಳಿದ ಮೇಲಂತೂ ಶಿಷ್ಯರಿಗೆ ಅಪರಿಮಿತ ಆಶ್ಚರ್ಯ ಆಯಿತು. “ಹಾಗಾದರೆ ಯಾರು ತಾನೆ ಜೀವೋದ್ಧಾರ ಹೊಂದಲು ಸಾಧ್ಯ?” ಎಂದು ತಮ್ಮ ತಮ್ಮೊಳಗೇ ಮಾತನಾಡಿಕೊಂಡರು.</verse>
				<verse number="27">ಯೇಸು ಅವರನ್ನು ನಿಟ್ಟಿಸಿ ನೋಡಿ, “ಮನುಷ್ಯರಿಗೆ ಇದು ಅಸಾಧ್ಯ, ದೇವರಿಗಲ್ಲ. ದೇವರಿಗೆ ಎಲ್ಲವೂ ಸಾಧ್ಯ,” ಎಂದರು.</verse>
				<verse number="28">ಆಗ ಪೇತ್ರನು ಮುಂದೆ ಬಂದು, “ನೋಡಿ, ನಾವು ಎಲ್ಲವನ್ನೂ ಬಿಟ್ಟುಬಿಟ್ಟು ನಿಮ್ಮನ್ನು ಹಿಂಬಾಲಿಸಿದ್ದೇವಲ್ಲ,” ಎಂದನು.</verse>
				<verse number="29">ಆಗ ಯೇಸು, “ನಾನು ನಿಶ್ಚಯವಾಗಿ ಹೇಳುತ್ತೇನೆ: ಯಾರಾದರೂ ನನ್ನ ನಿಮಿತ್ತ ಹಾಗೂ ಶುಭಸಂದೇಶದ ನಿಮಿತ್ತ ಮನೆಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ಅಕ್ಕತಂಗಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ತ್ಯಜಿಸುತ್ತಾನೋ ಅವನು,</verse>
				<verse number="30">ಈ ಕಾಲದಲ್ಲೇ ಮನೆ, ಅಣ್ಣತಮ್ಮ, ಅಕ್ಕತಂಗಿ, ತಾಯಿ, ಮಕ್ಕಳು, ಹೊಲಗದ್ದೆ ಇವೆಲ್ಲವನ್ನೂ ನೂರ್ಮಡಿಯಷ್ಟು ಪಡೆಯುವನು. ಇವುಗಳೊಂದಿಗೆ ಹಿಂಸೆಯನ್ನೂ ಅನುಭವಿಸಬೇಕಾಗುವುದು; ಅದಲ್ಲದೆ ಮುಂದಿನ ಲೋಕದಲ್ಲಿ ಅಮರಜೀವವನ್ನು ಪಡೆಯುವನು.</verse>
				<verse number="31">“ಆದರೆ ಮೊದಲನೆಯವರಲ್ಲಿ ಅನೇಕರು ಕಡೆಯವರಾಗುವರು; ಕಡೆಯವರಲ್ಲಿ ಅನೇಕರು ಮೊದಲಿನವರಾಗುವರು,” ಎಂದರು.</verse>
				<verse number="32">ಜೆರುಸಲೇಮಿಗೆ ಪ್ರಯಾಣಮಾಡುತ್ತ ಇದ್ದಾಗ ಯೇಸುಸ್ವಾಮಿ ಎಲ್ಲರಿಗಿಂತ ಮುಂದೆ ನಡೆಯುತ್ತಿದ್ದರು. ಅದನ್ನು ನೋಡಿ ಶಿಷ್ಯರು ಆಶ್ಚರ್ಯಪಟ್ಟರು. ಅವರ ಹಿಂದೆ ಬರುತ್ತಿದ್ದವರು ದಿಗಿಲುಗೊಂಡರು. ಆಗ ಯೇಸು ಹನ್ನೆರಡುಮಂದಿ ಶಿಷ್ಯರನ್ನು ತಮ್ಮ ಬಳಿಗೆ ಕರೆದು, ತಮಗೆ ಸಂಭವಿಸಲಿರುವ ವಿಷಯಗಳನ್ನು ಮತ್ತೊಮ್ಮೆ ಅವರಿಗೆ ಹೇಳತೊಡಗಿದರು:</verse>
				<verse number="33">“ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ಅಲ್ಲಿ ನರಪುತ್ರನನ್ನು ಮುಖ್ಯಯಾಜಕರ ಮತ್ತು ಧರ್ಮಶಾಸ್ತ್ರಿಗಳ ವಶಕ್ಕೆ ಒಪ್ಪಿಸುವರು. ಆತನು ಮರಣದಂಡನೆಗೆ ಅರ್ಹನೆಂದು ಅವರು ತೀರ್ಮಾನಿಸಿ, ಪರಕೀಯರ ಕೈಗೊಪ್ಪಿಸುವರು.</verse>
				<verse number="34">ಇವರು ಆತನನ್ನು ಪರಿಹಾಸ್ಯಮಾಡುವರು; ಆತನ ಮೇಲೆ ಉಗುಳುವರು; ಕೊರಡೆಗಳಿಂದ ಹೊಡೆಯುವರು; ಅನಂತರ ಕೊಂದುಹಾಕುವರು. ಆತನಾದರೋ ಮೂರು ದಿನದ ಮೇಲೆ ಪುನರುತ್ಥಾನ ಹೊಂದುವನು,” ಎಂದರು.</verse>
				<verse number="35">ಜೆಬೆದಾಯನ ಮಕ್ಕಳಾದ ಯಕೋಬ ಮತ್ತು ಯೊವಾನ್ನ ಯೇಸುವಿನ ಬಳಿಗೆ ಬಂದು, “ಗುರುವೇ, ನಮ್ಮದೊಂದು ಬಿನ್ನಹವಿದೆ. ಅದನ್ನು ನಡೆಸಿಕೊಡಬೇಕು,” ಎಂದು ವಿಜ್ಞಾಪಿಸಿಕೊಂಡರು.</verse>
				<verse number="36">“ನನ್ನಿಂದ ನಿಮಗೇನಾಗಬೇಕು?” ಎಂದು ಯೇಸು ಕೇಳಿದರು.</verse>
				<verse number="37">“ತಮ್ಮ ಮಹಿಮಾಸ್ಥಾನದಲ್ಲಿ ನಮ್ಮಲ್ಲಿ ಒಬ್ಬನು ತಮ್ಮ ಬಲಗಡೆಯಲ್ಲೂ ಇನ್ನೊಬ್ಬನು ಎಡಗಡೆಯಲ್ಲೂ ಆಸೀನರಾಗುವಂತೆ ಅನುಗ್ರಹಿಸಬೇಕು,” ಎಂದು ತಮ್ಮ ಬಯಕೆಯನ್ನು ತೋಡಿಕೊಂಡರು.</verse>
				<verse number="38">ಅದಕ್ಕೆ ಯೇಸು, “ನೀವು ಕೋರಿಕೊಂಡದ್ದು ಏನೆಂದು ನಿಮಗೇ ತಿಳಿಯದು. ನಾನು ಕುಡಿಯಲಿರುವ ಪಾತ್ರೆಯಿಂದ ಕುಡಿಯಲು ನಿಮ್ಮಿಂದಾದೀತೆ? ನಾನು ಪಡೆಯಲಿರುವ ಸ್ನಾನವನ್ನು ಪಡೆಯಲು ನಿಮ್ಮಿಂದ ಆದೀತೆ?” ಎಂದು ಪ್ರಶ್ನಿಸಿದರು. “ಹೌದು ಆಗುತ್ತದೆ,” ಎಂದು ಅವರು ಮರು ನುಡಿದರು.</verse>
				<verse number="39">ಆಗ ಯೇಸು, “ನಾನು ಕುಡಿಯುವ ಪಾತ್ರೆಯಿಂದ ನೀವೂ ಕುಡಿಯುವಿರಿ; ನಾನು ಪಡೆಯಲಿರುವ ಸ್ನಾನವನ್ನು ನೀವೂ ಪಡೆಯುವಿರಿ.</verse>
				<verse number="40">ಆದರೆ ನನ್ನ ಬಲಗಡೆಯಲ್ಲಾಗಲೀ ಎಡಗಡೆಯಲ್ಲಾಗಲೀ ಆಸೀನರಾಗುವಂತೆ ಅನುಗ್ರಹಿಸುವುದು ನನ್ನದಲ್ಲ. ಅದು ಯಾರಿಗಾಗಿ ಸಿದ್ಧಮಾಡಲಾಗಿದೆಯೋ ಅವರಿಗೇ ಸಿಗುವುದು,” ಎಂದು ನುಡಿದರು.</verse>
				<verse number="41">ಉಳಿದ ಹತ್ತುಮಂದಿ ಶಿಷ್ಯರು ಇದನ್ನು ಕೇಳಿದಾಗ ಯಕೋಬ ಯೊವಾನ್ನರ ಮೇಲೆ ಸಿಟ್ಟುಗೊಂಡರು.</verse>
				<verse number="42">ಆಗ ಯೇಸು ಶಿಷ್ಯರೆಲ್ಲರನ್ನು ತನ್ನ ಬಳಿಗೆ ಕರೆದು, “ಪ್ರಜಾಧಿಪತಿಗಳು ಎನಿಸಿಕೊಳ್ಳುವವರು ಪ್ರಜೆಗಳ ಮೇಲೆ ದರ್ಪದಿಂದ ದೊರೆತನ ಮಾಡುತ್ತಾರೆ; ಜನನಾಯಕರು ಎನಿಸಿಕೊಳ್ಳುವವರು ಜನರ ಮೇಲೆ ಅಧಿಕಾರ ಪ್ರದರ್ಶನ ಮಾಡುತ್ತಾರೆ; ಇದು ನಿಮಗೆ ಗೊತ್ತು.</verse>
				<verse number="43">ಆದರೆ ನೀವು ಹಾಗಿರಬಾರದು. ನಿಮ್ಮಲ್ಲಿ ಶ್ರೇಷ್ಠನಾಗಿರಲು ಇಚ್ಛಿಸುವವನು ನಿಮ್ಮ ಸೇವಕನಾಗಿರಲಿ;;</verse>
				<verse number="44">ಪ್ರಥಮನಾಗಿರಲು ಆಶಿಸುವವನು ಎಲ್ಲರ ದಾಸನಾಗಿರಲಿ.</verse>
				<verse number="45">ನರಪುತ್ರನು ಸಹ ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆ ಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಬೋಧಿಸಿದರು.</verse>
				<verse number="46">ಯೇಸುಸ್ವಾಮಿ ಮತ್ತು ಅವರ ಶಿಷ್ಯರು ಜೆರಿಕೊ ಪಟ್ಟಣವನ್ನು ತಲುಪಿದರು. ಅಲ್ಲಿಂದ ಹೊರಡುವಾಗ ಜನರ ದೊಡ್ಡಗುಂಪು ಅವರನ್ನು ಹಿಂಬಾಲಿಸಿತು.</verse>
				<verse number="47">ಕುರುಡು ಭಿಕ್ಷುಗಾರನಾದ, ತಿಮಾಯನ ಮಗ ಬಾರ್‍ತಿಮಾಯನು ದಾರಿಯ ಮಗ್ಗುಲಲ್ಲಿ ಕುಳಿತಿದ್ದನು. ಆ ಮಾರ್ಗವಾಗಿ ಹೋಗುತ್ತಿರುವಾತನು ನಜರೇತಿನ ಯೇಸು ಎಂದು ಕೇಳಿದೊಡನೆಯೇ, ಅವನು, “ಯೇಸುವೇ, ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಗಟ್ಟಿಯಾಗಿ ಕೂಗಿಕೊಂಡನು.</verse>
				<verse number="48">ಅನೇಕರು ‘ಸುಮ್ಮನಿರು’ ಎಂದು ಅವನನ್ನು ಗದರಿಸಿದರು. ಅವನಾದರೋ, “ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಇನ್ನಷ್ಟು ಗಟ್ಟಿಯಾಗಿ ಕೂಗಿಕೊಂಡನು.</verse>
				<verse number="49">ಇದನ್ನು ಕೇಳಿ ಯೇಸು ಅಲ್ಲೇ ನಿಂತು, “ಅವನನ್ನು ಕರೆದುಕೊಂಡು ಬನ್ನಿ,” ಎಂದು ಅಪ್ಪಣೆಮಾಡಿದರು. ಅವರು ಹೋಗಿ, “ಏಳು, ಭಯಪಡಬೇಡ, ಯೇಸು ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಹೇಳಿದರು.</verse>
				<verse number="50">ಅವನು ತನ್ನ ಮೇಲುಹೊದಿಕೆಯನ್ನು ಅಲ್ಲೇ ಬಿಟ್ಟು ತಟ್ಟನೆ ಎದ್ದು, ಯೇಸುವಿನ ಬಳಿಗೆ ಬಂದನು.</verse>
				<verse number="51">ಯೇಸು, “ನನ್ನಿಂದ ನಿನಗೆ ಏನಾಗಬೇಕು?” ಎಂದು ಕೇಳಿದರು. ಅದಕ್ಕೆ ಅವನು, “ಗುರುದೇವಾ! ನನಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದನು.</verse>
				<verse number="52">ಯೇಸು ಅವನಿಗೆ, “ಹೋಗು, ನಿನ್ನ ವಿಶ್ವಾಸವೇ ನಿನ್ನನ್ನು ಸ್ಪಸ್ಥಮಾಡಿದೆ,” ಎಂದರು. ಆ ಕ್ಷಣವೇ ಅವನಿಗೆ ದೃಷ್ಟಿಬಂದಿತು. ಅವನೂ ಯೇಸುವನ್ನು ಹಿಂಬಾಲಿಸಿ ಹಿಂದೆಹೋದನು.</verse>
			</chapter>
			<chapter number="11">
				<verse number="1">ಯೇಸುಸ್ವಾಮಿ ಮತ್ತು ಅವರ ಜೊತೆಯಲ್ಲಿದ್ದವರು ಜೆರುಸಲೇಮನ್ನು ಸಮೀಪಿಸಿದರು. ಓಲಿವ್ ಗುಡ್ಡದ ಬಳಿಯಿರುವ ಬೆತ್ಫಗೆ ಮತ್ತು ಬೆಥಾನಿಯ ಕಡೆಗೆ ಬಂದಾಗ ಯೇಸು ತಮ್ಮ ಶಿಷ್ಯರಲ್ಲಿ ಇಬ್ಬರನ್ನು ಕರೆದು, ಹೀಗೆಂದು ಹೇಳಿಕಳುಹಿಸಿದರು:</verse>
				<verse number="2">“ನಿಮ್ಮೆದುರಿಗಿರುವ ಆ ಹಳ್ಳಿಗೆ ಹೋಗಿರಿ; ಅದನ್ನು ಸೇರುತ್ತಲೇ, ಕಟ್ಟಿಹಾಕಿರುವ ಹೇಸರಗತ್ತೆಯ ಮರಿಯೊಂದನ್ನು ಕಾಣುವಿರಿ. ಈವರೆಗೆ ಅದರ ಮೇಲೆ ಯಾರೂ ಸವಾರಿಮಾಡಿಲ್ಲ. ಅದನ್ನು ಬಿಚ್ಚಿ ಇಲ್ಲಿಗೆ ತನ್ನಿ.</verse>
				<verse number="3">ಯಾರಾದರೂ ನಿಮ್ಮನ್ನು ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಪ್ರಭುವಿಗೆ ಇದು ಬೇಕಾಗಿದೆ. ಅವರು ಇದನ್ನು ಬೇಗನೆ ಹಿಂದಕ್ಕೆ ಕಳುಹಿಸಿಕೊಡುವರು,’ ಎಂದು ಹೇಳಿ,” ಎಂದರು.</verse>
				<verse number="4">ಶಿಷ್ಯರು ಹೋಗಿ ಬೀದಿಯಲ್ಲಿದ್ದ ಹೇಸರಗತ್ತೆಯ ಮರಿಯೊಂದನ್ನು ಕಂಡರು. ಬಾಗಿಲಿನ ಬಳಿ ಕಟ್ಟಿಹಾಕಿದ್ದ ಅದನ್ನು ಶಿಷ್ಯರು ಬಿಚ್ಚಿದರು.</verse>
				<verse number="5">ಅಲ್ಲಿ ನಿಂತಿದ್ದವರಲ್ಲಿ ಕೆಲವರು, ಇದನ್ನು ನೋಡಿ, “ಅದನ್ನೇಕೆ ಬಿಚ್ಚುತ್ತೀರಿ?” ಎಂದು ಕೇಳಿದರು.</verse>
				<verse number="6">ಯೇಸು ಹೇಳಿದಂತೆಯೇ ಶಿಷ್ಯರು ಉತ್ತರಕೊಡಲು, ಆ ಮರಿಕತ್ತೆಯನ್ನು ತೆಗೆದುಕೊಂಡುಹೋಗಲು ಬಿಟ್ಟುಕೊಟ್ಟರು.</verse>
				<verse number="7">ಶಿಷ್ಯರು ಅದನ್ನು ಯೇಸುವಿನ ಬಳಿಗೆ ತಂದು, ತಮ್ಮ ಮೇಲಂಗಿಗಳನ್ನು ಅದರ ಮೇಲೆ ಹಾಕಿದರು. ಯೇಸು ಅದನ್ನು ಹತ್ತಿ ಕುಳಿತರು.</verse>
				<verse number="8">ಅನೇಕರು ತಮ್ಮ ಹೊದಿಕೆಗಳನ್ನು ದಾರಿಯಲ್ಲಿ ಹಾಸಿದರು. ಇನ್ನೂ ಕೆಲವರು ತೋಟಗಳಿಂದ ಮರದ ರೆಂಬೆಗಳನ್ನು ಕಡಿದು, ಎಲೆಗಳನ್ನು ಹರಡಿದರು.</verse>
				<verse number="9">ಯೇಸುವಿನ ಹಿಂದೆಯೂ ಮುಂದೆಯೂ ಇದ್ದವರು - “ಜಯವಾಗಲಿ! ಸರ್ವೇಶ್ವರನ ನಾಮದಲ್ಲಿ ಬರುವವರಿಗೆ ಮಂಗಳವಾಗಲಿ!</verse>
				<verse number="10">ನಮ್ಮ ಪೂರ್ವಜ ದಾವೀದನ ಸಾಮ್ರಾಜ್ಯ ಉದಯವಾಗಲಿದೆ; ಅದಕ್ಕೆ ಶುಭವಾಗಲಿ! ಮಹೋನ್ನತದಲ್ಲಿ ದೇವರಿಗೆ ಜಯವಾಗಲಿ!” ಎಂದು ಘೋಷಿಸುತ್ತಿದ್ದರು.</verse>
				<verse number="11">ಯೇಸು ಜೆರುಸಲೇಮನ್ನು ಸೇರಿ ಮಹಾದೇವಾಲಯವನ್ನು ಪ್ರವೇಶಿಸಿದರು. ಅಲ್ಲಿ ನಡೆಯುತ್ತಿದ್ದ ಎಲ್ಲವನ್ನೂ ನೋಡುವಷ್ಟರಲ್ಲಿ ಕತ್ತಲಾಗುತ್ತಾ ಬಂದಿತು; ಆದುದರಿಂದ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು, ಅವರು ಬೆಥಾನಿಯಕ್ಕೆ ಹೊರಟುಹೋದರು.</verse>
				<verse number="12">ಮರುದಿನ ಅವರೆಲ್ಲರೂ ಬೆಥಾನಿಯದಿಂದ ಜೆರುಸಲೇಮಿಗೆ ಬರುತ್ತಿದ್ದಾಗ ಯೇಸುಸ್ವಾಮಿಗೆ ಹಸಿವಾಯಿತು.</verse>
				<verse number="13">ದೂರದಲ್ಲಿ ಎಲೆ ತುಂಬಿದ ಅಂಜೂರದ ಮರವೊಂದು ಕಣ್ಣಿಗೆ ಬಿದ್ದಿತು. ಅದರಲ್ಲಿ ಹಣ್ಣೇನಾದರೂ ಸಿಕ್ಕೀತೆಂದು ಅಲ್ಲಿಗೆ ಹೋದರು. ಹತ್ತಿರಕ್ಕೆ ಬಂದಾಗ ಅದರಲ್ಲಿ ಬರೀ ಎಲೆಗಳೇ ಹೊರತು ಇನ್ನೇನೂ ಕಾಣಲಿಲ್ಲ. ಅದು ಅಂಜೂರದ ಹಣ್ಣಿನ ಕಾಲವಾಗಿರಲಿಲ್ಲ.</verse>
				<verse number="14">ಯೇಸು ಆ ಮರಕ್ಕೆ, “ಇನ್ನು ಮುಂದೆ ನಿನ್ನ ಹಣ್ಣನ್ನು ಯಾರೂ ಎಂದಿಗೂ ತಿನ್ನದಂತಾಗಲಿ,” ಎಂದರು. ಶಿಷ್ಯರು ಈ ಮಾತುಗಳನ್ನು ಕೇಳಿಸಿಕೊಂಡರು.</verse>
				<verse number="15">ತರುವಾಯ ಅವರು ಜೆರುಸಲೇಮಿಗೆ ಬಂದರು. ಯೇಸುಸ್ವಾಮಿ ಮಹಾದೇವಾಲಯಕ್ಕೆ ಹೋಗಿ, ಅಲ್ಲಿ ಮಾರುತ್ತಿದ್ದವರನ್ನೂ ಕೊಳ್ಳುತ್ತಿದ್ದವರನ್ನೂ ಹೊರಗಟ್ಟತೊಡಗಿದರು; ನಾಣ್ಯ ವಿನಿಮಯಮಾಡುತ್ತಿದ್ದ ವ್ಯಾಪಾರಿಗಳ ಮೇಜುಗಳನ್ನು ಕೆಡವಿದರು; ಪಾರಿವಾಳಗಳನ್ನು ಮಾರುತ್ತಿದ್ದವರ ಮಣೆಗಳನ್ನು ಉರುಳಿಸಿದರು.</verse>
				<verse number="16">ಹೊರೆಹೊತ್ತುಕೊಂಡು ದೇವಾಲಯದ ಮೂಲಕ ಹಾದುಹೋಗುವವರನ್ನು ತಡೆದರು.</verse>
				<verse number="17">“ ‘ಸರ್ವಜನಾಂಗಗಳಿಗೂ ಪ್ರಾರ್ಥನಾಲಯ ನನ್ನೀ ಆಲಯ’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ ಅಲ್ಲವೇ? ನೀವು ಅದನ್ನು ಕಳ್ಳಕಾಕರ ಗುಹೆಯನ್ನಾಗಿ ಮಾಡಿದ್ದೀರಿ,” ಎಂದು ಯೇಸು ಅವರಿಗೆ ಬುದ್ಧಿಹೇಳಿದರು.</verse>
				<verse number="18">ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ನಡೆದ ಈ ಸಂಗತಿಯನ್ನು ಕೇಳಿ ಯೇಸುವನ್ನು ಕೊಲ್ಲಿಸುವ ಮಾರ್ಗವನ್ನು ಹುಡುಕತೊಡಗಿದರು. ಏಕೆಂದರೆ, ಯೇಸುವನ್ನು ಕಂಡರೆ ಅವರಿಗೆ ಭಯವಿತ್ತು. ಕಾರಣ - ಜನರೆಲ್ಲರೂ ಅವರ ಬೋಧನೆಗೆ ಮಾರುಹೋಗಿದ್ದರು.</verse>
				<verse number="19">ಸೂರ್ಯಾಸ್ತಮದ ಬಳಿಕ ಯೇಸು ಮತ್ತು ಶಿಷ್ಯರು ಪಟ್ಟಣದಿಂದ ಹೊರಗೆಹೋದರು.</verse>
				<verse number="20">ಬೆಳಿಗ್ಗೆ ಅವರೆಲ್ಲರೂ ಅದೇ ಮಾರ್ಗವಾಗಿ ಹಿಂದಿರುಗುವಾಗ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು.</verse>
				<verse number="21">ಪೇತ್ರನು ಹಿಂದಿನ ದಿನ ನಡೆದುದನ್ನು ಸ್ಮರಿಸಿಕೊಂಡು, ಯೇಸುಸ್ವಾಮಿಗೆ, “ಗುರುವೇ, ತಾವು ಶಪಿಸಿದ ಆ ಅಂಜೂರದ ಮರ ಈಗ ಒಣಗಿಹೋಗಿದೆ,” ಎಂದನು.</verse>
				<verse number="22">ಅದಕ್ಕೆ ಯೇಸು, “ನಿಮಗೆ ದೇವರಲ್ಲಿ ವಿಶ್ವಾಸವಿರಲಿ,</verse>
				<verse number="23">ಆಗ ಯಾವನಾದರೂ ಈ ಬೆಟ್ಟಕ್ಕೆ, ‘ನೀನು ಇಲ್ಲಿಂದ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ, ಮನಸ್ಸಿನಲ್ಲಿ ಸಂದೇಹಪಡದೆ, ಅದು ಸಂಭವಿಸುವುದೆಂದು ವಿಶ್ವಾಸಿಸಿದರೆ, ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ, ಅವನು ಹೇಳಿದಂತೆಯೇ ಆಗುವುದು.</verse>
				<verse number="24">ಆದುದರಿಂದ ನೀವು ಪ್ರಾರ್ಥನೆಯಲ್ಲಿ ಏನೆಂದು ಬೇಡಿಕೊಳ್ಳುತ್ತೀರೋ, ಅದನ್ನೆಲ್ಲಾ ಪಡೆದಾಯಿತೆಂದು ವಿಶ್ವಾಸಿಸಿರಿ; ಅದು ಲಭಿಸುವುದು ನಿಶ್ಚಯವೆಂದು ನಿಮಗೆ ಹೇಳುತ್ತೇನೆ.</verse>
				<verse number="25">ಇದಲ್ಲದೆ, ನೀವು ಪ್ರಾರ್ಥನೆ ಮಾಡುವಾಗಲೆಲ್ಲ, ಯಾರಿಗಾದರೂ ವಿರೋಧವಾಗಿ ನಿಮ್ಮ ಮನಸ್ಸಿನಲ್ಲಿ ಏನಾದರೂ ಇದ್ದರೆ, ಅದನ್ನು ಕ್ಷಮಿಸಿಬಿಡಿ,</verse>
				<verse number="26">ಆಗ ಸ್ವರ್ಗದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸಿಬಿಡುವರು.\</verse>
				<verse number="27">ಯೇಸು ಮತ್ತು ಶಿಷ್ಯರು ಪುನಃ ಜೆರುಸಲೇಮಿಗೆ ಬಂದರು. ಯೇಸು ದೇವಾಲಯದ ಆವರಣದಲ್ಲಿ ತಿರುಗಾಡುತ್ತಿದ್ದಾಗ ಮುಖ್ಯಯಾಜಕರು, ಧರ್ಮಶಾಸ್ತ್ರಿಗಳು ಮತ್ತು ಸಭಾಪ್ರಮುಖರು ಅವರ ಬಳಿಗೆ ಬಂದು,</verse>
				<verse number="28">“ಇದನ್ನೆಲ್ಲಾ ನೀನು ಯಾವ ಅಧಿಕಾರದಿಂದ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರು ಯಾರು?” ಎಂದು ಕೇಳಿದರು.</verse>
				<verse number="29">ಅದಕ್ಕೆ ಯೇಸು, “ನಾನೂ ನಿಮಗೆ ಒಂದು ಪ್ರಶ್ನೆ ಹಾಕುತ್ತೇನೆ; ಅದಕ್ಕೆ ಉತ್ತರಕೊಡಿ. ಆಗ ಯಾವ ಅಧಿಕಾರದಿಂದ ನಾನು ಇದೆಲ್ಲವನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ.</verse>
				<verse number="30">ಸ್ನಾನದೀಕ್ಷೆ ಕೊಡುವ ಅಧಿಕಾರ ಯೊವಾನ್ನನಿಗೆ ಎಲ್ಲಿಂದ ಬಂದಿತು? ದೇವರಿಂದಲೋ? ಮನುಷ್ಯರಿಂದಲೋ? ಉತ್ತರಕೊಡಿ,” ಎಂದರು. ಇದನ್ನು ಕೇಳಿದ ಅವರು ತಮ್ಮ ತಮ್ಮೊಳಗೇ ತರ್ಕಮಾಡುತ್ತಾ,</verse>
				<verse number="31">“ದೇವರಿಂದ ಬಂದಿತೆಂದು ಹೇಳಿದರೆ, ‘ಹಾಗಾದರೆ ನೀವೇಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವನು.</verse>
				<verse number="32">‘ಮನುಷ್ಯರಿಂದ ಬಂದಿತು’ ಎಂದು ಹೇಳೋಣ ಎಂದರೆ ಅದೂ ಆಗದು,” ಎಂದುಕೊಂಡರು. ಯೊವಾನ್ನನು ನಿಜವಾದ ಪ್ರವಾದಿಯೆಂದು ಸರ್ವರು ನಂಬಿದ್ದರಿಂದ ಅವರಿಗೆ ಜನರ ಭಯವಿತ್ತು.</verse>
				<verse number="33">ಆದುದರಿಂದ ಅವರು, “ನಮಗೆ ಗೊತ್ತಿಲ್ಲ” ಎಂದು ಉತ್ತರಕೊಟ್ಟರು. ಅದಕ್ಕೆ ಯೇಸು, “ಹಾಗಾದರೆ ನಾನೂ ಕೂಡ ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.</verse>
			</chapter>
			<chapter number="12">
				<verse number="1">ಅನಂತರ ಯೇಸುಸ್ವಾಮಿ ಅವರೊಡನೆ ಸಾಮತಿಗಳ ರೂಪದಲ್ಲಿ ಮಾತನಾಡತೊಡಗಿದರು: “ಒಬ್ಬನು ದ್ರಾಕ್ಷಿಯತೋಟ ಒಂದನ್ನು ಮಾಡಿ, ಅದರ ಸುತ್ತ ಬೇಲಿ ಹಾಕಿಸಿದ; ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಬಳಿಕ ತೋಟವನ್ನು ಗೇಣಿದಾರರಿಗೆ ವಹಿಸಿ, ಹೊರನಾಡಿಗೆ ಹೊರಟುಹೋದ.</verse>
				<verse number="2">ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಗೇಣಿದಾರರ ಬಳಿಗೆ ಕಳುಹಿಸಿದ.</verse>
				<verse number="3">ಆದರೆ ಅವರು ಆ ಸೇವಕನನ್ನು ಹಿಡಿದು, ಹೊಡೆದು, ಬರಿಗೈಯಲ್ಲಿ ಹಿಂದಕ್ಕೆ ಅಟ್ಟಿದರು.</verse>
				<verse number="4">ತೋಟದ ಯಜಮಾನ ಪುನಃ ಇನ್ನೊಬ್ಬ ಸೇವಕನನ್ನು ಕಳುಹಿಸಿದ. ಅವರು ಅವನ ತಲೆಯ ಮೇಲೆ ಹೊಡೆದು, ಅವಮಾನ ಮಾಡಿ ಕಳುಹಿಸಿದರು.</verse>
				<verse number="5">ಯಜಮಾನ ಆಮೇಲೆ ಮತ್ತೊಬ್ಬ ಸೇವಕನನ್ನು ಕಳುಹಿಸಿದ. ಇವನನ್ನು ಅವರು ಕೊಂದುಹಾಕಿದರು. ಇನ್ನೂ ಅನೇಕರನ್ನು ಕಳುಹಿಸಲು, ಅವರಲ್ಲಿ ಕೆಲವರನ್ನು ಹೊಡೆದರು, ಕೆಲವರನ್ನು ಕಡಿದುಹಾಕಿದರು.</verse>
				<verse number="6">ಯಜಮಾನನಿಗೆ ಇನ್ನು ಉಳಿದಿದ್ದವನೆಂದರೆ ಅವನ ಮುದ್ದುಮಗನೊಬ್ಬನೇ, “ನನ್ನ ಮಗನಿಗಾದರೂ ಅವರು ಮರ್ಯಾದೆಕೊಟ್ಟಾರು,” ಎಂದು ಭಾವಿಸಿ, ಕಟ್ಟಕಡೆಗೆ ಆ ಯಜಮಾನ ತನ್ನ ಮಗನನ್ನೇ ಅವರ ಬಳಿಗೆ ಕಳುಹಿಸಿದ.</verse>
				<verse number="7">ಆದರೆ ಆ ಗೇಣಿದಾರರು, ‘ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ, ಇವನನ್ನು ಮುಗಿಸಿಬಿಡೋಣ. ಆಗ ಈ ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಹೂಡಿ,</verse>
				<verse number="8">ಅವನನ್ನು ಹಿಡಿದು, ಕೊಂದುಹಾಕಿ ತೋಟದ ಆಚೆಗೆ ಎಸೆದುಬಿಟ್ಟರು.</verse>
				<verse number="9">ಇಂತಹ ಪರಿಸ್ಥಿತಿಯಲ್ಲಿ ಆ ತೋಟದ ಯಜಮಾನ ಏನು ಮಾಡುವನು? ಅವನು ಬಂದು ಆ ಗೇಣಿದಾರರನ್ನು ಸಂಹರಿಸಿ ತೋಟವನ್ನು ಬೇರೆ ಗೇಣಿದಾರರಿಗೆ ಒಪ್ಪಿಸುವನು. ಪವಿತ್ರಗ್ರಂಥದಲ್ಲಿ:</verse>
				<verse number="10">ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು; ಸರ್ವೇಶ್ವರನಿಂದಲೇ ಆದ ಈ ಕಾರ್ಯ ನಮ್ಮ ಕಣ್ಣಿಗೆ ಅದೆಂಥ ಆಶ್ಚರ್ಯ! ಎಂಬ ವಾಕ್ಯವನ್ನು ನೀವು ಓದಲಿಲ್ಲವೇ?\ ಎಂದರು.</verse>
				<verse number="11"></verse>
				<verse number="12">ತಮ್ಮನ್ನು ಕುರಿತೇ ಈ ಸಾಮತಿಯನ್ನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಂಡ ಆ ಯೆಹೂದ್ಯ ಮುಖಂಡರು ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟು ಅವರನ್ನು ಬಿಟ್ಟುಹೋದರು.</verse>
				<verse number="13">ಆಮೇಲೆ ಅವರು ಯೇಸುಸ್ವಾಮಿಯನ್ನು ಮಾತಿನಲ್ಲೇ ಸಿಕ್ಕಿಸುವ ಉದ್ದೇಶದಿಂದ ಕೆಲವು ಫರಿಸಾಯರನ್ನೂ ಹೆರೋದನ ಪಕ್ಷದ ಕೆಲವರನ್ನೂ ಅವರ ಬಳಿಗೆ ಕಳುಹಿಸಿದರು.</verse>
				<verse number="14">ಇವರು ಬಂದು, “ಬೋಧಕರೇ, ತಾವು ಸತ್ಯವಂತರು, ಸ್ಥಾನಮಾನಕ್ಕೆ ಮಣಿಯದವರು, ಮುಖದಾಕ್ಷಿಣ್ಯಕ್ಕೆ ಎಡೆಕೊಡದವರು, ಸತ್ಯಕ್ಕನುಸಾರ ದೈವಮಾರ್ಗವನ್ನು ಬೋಧಿಸುವವರು ಎಂದು ನಾವು ಬಲ್ಲೆವು. ಹೀಗಿರುವಲ್ಲಿ ರೋಮ್‍ಚಕ್ರಾಧಿಪತಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ, ಅಲ್ಲವೋ? ನಾವದನ್ನು ಕೊಡಬೇಕೋ, ಬೇಡವೋ?” ಎಂದು ಕೇಳಿದರು.</verse>
				<verse number="15">ಅವರ ಕಪಟತನವನ್ನು ಯೇಸು ಗ್ರಹಿಸಿ, “ನೀವು ನನ್ನನ್ನು ಪರೀಕ್ಷಿಸುವುದೇಕೆ? ಒಂದು ನಾಣ್ಯವನ್ನು ತನ್ನಿ, ಅದನ್ನು ನೋಡೋಣ,” ಎಂದರು.</verse>
				<verse number="16">ಅವರೊಂದು ನಾಣ್ಯವನ್ನು ತಂದರು. “ಇದರ ಮೇಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಯೇಸು ಕೇಳಿದರು. ಅದಕ್ಕೆ ಅವರು, “ಅವು ರೋಮ್‍ಚಕ್ರವರ್ತಿಯವು,” ಎಂದರು.</verse>
				<verse number="17">ಆಗ ಯೇಸು, “ಹಾಗಾದರೆ ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದರು. ಇದನ್ನು ಕೇಳಿದ್ದೇ ಆ ಜನರು ಯೇಸುವಿನ ಬಗ್ಗೆ ಅತ್ಯಾಶ್ಚರ್ಯಪಟ್ಟರು.</verse>
				<verse number="18">ಅನಂತರ ಸದ್ದುಕಾಯರು ಯೇಸುಸ್ವಾಮಿಯ ಬಳಿಗೆ ಬಂದರು. ಸತ್ತಮೇಲೆ ಪುನರುತ್ಥಾನ ಇಲ್ಲವೆಂಬುದು ಇವರ ಅಭಿಮತ. ಇವರು ಯೇಸುವನ್ನು,</verse>
				<verse number="19">“ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,’ ಎಂದು ಮೋಶೆ ನಮಗಾಗಿ ಬರೆದಿಟ್ಟಿದ್ದಾನಲ್ಲವೇ?</verse>
				<verse number="20">ಒಮ್ಮೆ ಏಳುಮಂದಿ ಅಣ್ಣತಮ್ಮಂದಿರಿದ್ದರು. ಅವರಲ್ಲಿ ಮೊದಲನೆಯವನಿಗೆ ವಿವಾಹವಾಯಿತು.</verse>
				<verse number="21">ಅವನು ಮಕ್ಕಳಿಲ್ಲದೆ ಮೃತನಾದುದರಿಂದ ಎರಡನೆಯವನು ಅವನ ಹೆಂಡತಿಯನ್ನು ಮದುವೆಮಾಡಿಕೊಂಡು, ಸಂತಾನವಿಲ್ಲದೆ ಸಾವನ್ನಪ್ಪಿದ. ಮೂರನೆಯವನಿಗೂ ಇದೇ ಗತಿಯಾಯಿತು.</verse>
				<verse number="22">ಅನಂತರ, ಉಳಿದವರೂ ಒಬ್ಬರ ಬಳಿಕ ಇನ್ನೊಬ್ಬರು ಆಕೆಯನ್ನು ಮದುವೆಮಾಡಿಕೊಂಡು, ಸಂತಾನವಿಲ್ಲದೆ ಸತ್ತುಹೋದರು. ಕಡೆಗೆ ಆ ಸ್ತ್ರೀಯೂ ಮರಣಹೊಂದಿದಳು.</verse>
				<verse number="23">ಈಗ ಹೇಳಿ, ಪುನರುತ್ಥಾನದ ದಿನದಲ್ಲಿ, ಆಕೆ ಯಾರ ಹೆಂಡತಿ ಎನಿಸಿಕೊಳ್ಳುವಳು? ಏಳು ಮಂದಿ ಸಹೋದರರೂ ಆಕೆಯನ್ನು ವಿವಾಹವಾಗಿದ್ದರಲ್ಲವೇ?” ಎಂದು ಪ್ರಶ್ನಿಸಿದರು.</verse>
				<verse number="24">ಅದಕ್ಕೆ ಯೇಸು, “ನಿಮ್ಮದು ಎಂಥಾ ತಪ್ಪು ಅಭಿಪ್ರಾಯ! ಪವಿತ್ರಗ್ರಂಥವನ್ನು ಆಗಲಿ, ದೇವರ ಶಕ್ತಿಯನ್ನಾಗಲೀ ನೀವು ಅರ್ಥಮಾಡಿಕೊಂಡಿಲ್ಲ.</verse>
				<verse number="25">ಸತ್ತವರು ಪುನರುತ್ಥಾನವಾದ ಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಅವರು ಸ್ವರ್ಗದ ದೇವದೂತರಂತೆ ಇರುತ್ತಾರೆ.</verse>
				<verse number="26">ಇದಲ್ಲದೆ ಸತ್ತವರು ಪುನರುತ್ಥಾನವಾಗುವ ವಿಷಯದಲ್ಲಿ ಹೇಳುವುದಾದರೆ: ‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು’ ಎಂದು ದೇವರು ಮೋಶೆಗೆ ಹೇಳಿದ್ದನ್ನು ಮೋಶೆಯ ಗ್ರಂಥದಲ್ಲಿ, ‘ಉರಿಯುವ ಪೊದೆ’ಯ ಪ್ರಸ್ತಾಪವಿರುವ ಭಾಗದಲ್ಲಿ, ನೀವು ಓದಿರಬೇಕಲ್ಲವೇ?</verse>
				<verse number="27">ದೇವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ, ನಿಮ್ಮ ಅಭಿಪ್ರಾಯ ತೀರಾ ತಪ್ಪಾಗಿದೆ,” ಎಂದರು.</verse>
				<verse number="28">ಈ ತರ್ಕವನ್ನು ಕೇಳುತ್ತಿದ್ದ ಧರ್ಮಶಾಸ್ತ್ರಿ ಒಬ್ಬನು, ಯೇಸುಸ್ವಾಮಿ ಸದ್ದುಕಾಯರಿಗೆ ಸಮರ್ಪಕವಾದ ಉತ್ತರವನ್ನು ಕೊಟ್ಟಿದ್ದನ್ನು ಮೆಚ್ಚಿ, ಅವರ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಪ್ರಪ್ರಥಮ ಆಜ್ಞೆ ಯಾವುದು?” ಎಂದು ಕೇಳಿದನು.</verse>
				<verse number="29">ಯೇಸು ಅವನಿಗೆ, “ಇಸ್ರಯೇಲ್ ಸಮಾಜವೇ ಕೇಳು: ನಮ್ಮ ದೇವರಾದ ಸರ್ವೇಶ್ವರ ಏಕೈಕ ಸರ್ವೇಶ್ವರ;</verse>
				<verse number="30">ನಿನ್ನ ದೇವರಾದ ಸರ್ವೇಶ್ವರನನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ನಿನ್ನ ಪೂರ್ಣ ಶಕ್ತಿಯಿಂದಲೂ ಪ್ರೀತಿಸು. ಇದೇ ಪ್ರಪ್ರಥಮ ಆಜ್ಞೆ.</verse>
				<verse number="31">“ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು. ಇದೇ ಎರಡನೆಯ ಆಜ್ಞೆ. ಇವೆರಡು ಆಜ್ಞೆಗಳಿಗಿಂತ ಶ್ರೇಷ್ಠವಾದ ಆಜ್ಞೆ ಬೇರೊಂದೂ ಇಲ್ಲ,” ಎಂದರು.</verse>
				<verse number="32">ಇದನ್ನು ಕೇಳಿದ ಆ ಧರ್ಮಶಾಸ್ತ್ರಿ, “ಬೋಧಕರೇ, ಚೆನ್ನಾಗಿ ಹೇಳಿದಿರಿ. ದೇವರು ಒಬ್ಬರೇ, ಅವರ ಹೊರತು ಬೇರೆ ದೇವರಿಲ್ಲ, ಎಂದು ನೀವು ಹೇಳಿದ್ದು ಸತ್ಯ;</verse>
				<verse number="33">ಅವರನ್ನು ನಾವು ಪೂರ್ಣ ಹೃದಯದಿಂದಲೂ ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವಂತೆಯೇ ನಮ್ಮ ನೆರೆಯವರನ್ನೂ ಪ್ರೀತಿಸತಕ್ಕದ್ದು. ಇವು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಯಾಗಾದಿಗಳಿಗಿಂತಲೂ ಎಷ್ಟೋ ಮೇಲಾದುವು,” ಎಂದನು.</verse>
				<verse number="34">ಅವನ ವಿವೇಕಪೂರ್ಣವಾದ ಉತ್ತರವನ್ನು ಮೆಚ್ಚಿ ಯೇಸು, “ನೀನು ದೇವರ ಸಾಮ್ರಾಜ್ಯದಿಂದ ದೂರವಿಲ್ಲ,” ಎಂದರು. ಇದಾದ ಬಳಿಕ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರೊಬ್ಬರೂ ಧೈರ್ಯಗೊಳ್ಳಲಿಲ್ಲ.</verse>
				<verse number="35">ಬಳಿಕ ಯೇಸುಸ್ವಾಮಿ ಮಹಾದೇವಾಲಯದಲ್ಲಿ ಉಪದೇಶಮಾಡುತ್ತಾ ಈ ಪ್ರಶ್ನೆ ಎತ್ತಿದರು: “ಅಭಿಷಿಕ್ತನಾದ ಲೋಕೋದ್ಧಾರಕನನ್ನು ಧರ್ಮಶಾಸ್ತ್ರಿಗಳು ‘ದಾವೀದನ ಪುತ್ರ’ ಎಂದು ಕರೆಯುತ್ತಾರಲ್ಲಾ! ಅದು ಹೇಗಾದೀತು?</verse>
				<verse number="36">‘ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿಗೆ ಹಾಕುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು ಎಂದು ನನ್ನ ಪ್ರಭುವಿಗೆ ಸರ್ವೇಶ್ವರ ಹೇಳಿದ್ದಾರೆ,’ ಎಂದು ದಾವೀದನೇ ಪವಿತ್ರಾತ್ಮಪ್ರೇರಣೆಯಿಂದ ಹೇಳಿದ್ದಾನಲ್ಲಾ!</verse>
				<verse number="37">ದಾವೀದನೇ, ಕ್ರಿಸ್ತನನ್ನು ‘ನನ್ನ ಪ್ರಭು’ ಎಂದು ಕರೆದಿರುವಲ್ಲಿ ಆತನು ದಾವೀದನ ಪುತ್ರನಾಗಿರುವುದು ಹೇಗೆ?” ಎಂದು ಪ್ರಶ್ನಿಸಿದರು.</verse>
				<verse number="38">ಜನಸಮೂಹವು ಸಂತಸಚಿತ್ತದಿಂದ ಯೇಸುಸ್ವಾಮಿಯ ಮಾತುಗಳನ್ನು ಆಲಿಸುತ್ತಿತ್ತು. ಯೇಸು ತಮ್ಮ ಉಪದೇಶವನ್ನು ಮುಂದುವರಿಸುತ್ತಾ,</verse>
				<verse number="39">“ಧರ್ಮಶಾಸ್ತ್ರಿಗಳ ಬಗ್ಗೆ ಎಚ್ಚರಿಕೆ! ಅವರು ನಿಲುವಂಗಿಗಳನ್ನು ಧರಿಸಿಕೊಂಡು ತಿರುಗಾಡುತ್ತಾರೆ; ಪೇಟೆ ಬೀದಿಗಳಲ್ಲಿ ವಂದನೋಪಚಾರಗಳನ್ನೂ ಪ್ರಾರ್ಥನಾ ಮಂದಿರಗಳಲ್ಲಿ ಉನ್ನತ ಆಸನಗಳನ್ನೂ ಔತಣ ಸಮಾರಂಭಗಳಲ್ಲಿ ಶ್ರೇಷ್ಠಸ್ಥಾನಗಳನ್ನೂ ಅಪೇಕ್ಷಿಸುತ್ತಾರೆ.</verse>
				<verse number="40">ವಿಧವೆಯರ ಮನೆಮಾರುಗಳನ್ನು ದೋಚಿಕೊಳ್ಳುವ ಈ ಜನ ನಟನೆಗಾಗಿ ದೀರ್ಘವಾಗಿ ಜಪತಪಗಳನ್ನು ಮಾಡುತ್ತಾರೆ. ಇವರನ್ನು ದೇವರು ಬಹಳ ಕಠಿಣವಾದ ದಂಡನೆಗೆ ಗುರಿಪಡಿಸುವರು,” ಎಂದರು.</verse>
				<verse number="41">ಯೇಸುಸ್ವಾಮಿ ದೇವಾಲಯದಲ್ಲಿ ಕಾಣಿಕೆಪೆಟ್ಟಿಗೆಗಳಿಗೆ ಎದುರಾಗಿ ಕುಳಿತಿದ್ದರು. ಜನರು ಅದರಲ್ಲಿ ಹಣಹಾಕುವ ರೀತಿ ಅವರ ಕಣ್ಣಿಗೆ ಬಿತ್ತು. ಧನವಂತರನೇಕರು ಹೆಚ್ಚು ಹೆಚ್ಚು ಹಣವನ್ನು ಹಾಕುತ್ತಿದ್ದರು.</verse>
				<verse number="42">ಅಷ್ಟರಲ್ಲಿ ಬಡ ವಿಧವೆ ಒಬ್ಬಳು ಅಲ್ಲಿಗೆ ಬಂದಳು. ತಾಮ್ರದ ಚಿಕ್ಕ ನಾಣ್ಯಗಳೆರಡನ್ನು ಕಾಣಿಕೆಯಾಗಿ ಹಾಕಿದಳು.</verse>
				<verse number="43">ಆಗ ಯೇಸು ತಮ್ಮ ಶಿಷ್ಯರನ್ನು ಕರೆದು, “ಕಾಣಿಕೆ ಪೆಟ್ಟಿಗೆಯಲ್ಲಿ ಹಣ ಹಾಕಿದ ಎಲ್ಲರಿಗಿಂತಲೂ ಈ ವಿಧವೆ ಹೆಚ್ಚಾಗಿ ಅರ್ಪಿಸಿದಳು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ;</verse>
				<verse number="44">ಇವರೆಲ್ಲರೂ ತಮ್ಮ ಅಪರಿಮಿತ ಐಶ್ವರ್ಯದಿಂದ ಕಾಣಿಕೆಯಿತ್ತರು. ಈಕೆಯಾದರೋ ತನ್ನ ಕಡುಬಡತನದಲ್ಲೂ ತನ್ನಲ್ಲಿ ಇದ್ದುದೆಲ್ಲವನ್ನು ಅರ್ಪಿಸಿದಳು; ತನ್ನ ಜೀವನಾಧಾರವನ್ನೇ ಕೊಟ್ಟುಬಿಟ್ಟಳು,” ಎಂದರು.</verse>
			</chapter>
			<chapter number="13">
				<verse number="1">ಯೇಸುಸ್ವಾಮಿ ದೇವಾಲಯದಿಂದ ಹೊರಗೆ ಬರುತ್ತಿದ್ದಾಗ ಅವರ ಶಿಷ್ಯರಲ್ಲಿ ಒಬ್ಬನು, “ಗುರುವೇ, ಅತ್ತ ನೋಡಿ; ಎಂಥ ಬಾರಿ ಕಲ್ಲುಗಳು! ಎಷ್ಟು ರಮ್ಯವಾದ ಕಟ್ಟಡಗಳು!” ಎಂದು ವರ್ಣಿಸತೊಡಗಿದನು.</verse>
				<verse number="2">ಅದಕ್ಕೆ ಯೇಸು, “ಈ ಮಹಾಕಟ್ಟಡಗಳನ್ನು ನೀನು ನೋಡುತ್ತಿರುವೆಯಲ್ಲವೆ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವನ್ನೂ ಕೆಡವಿಹಾಕುವರು,” ಎಂದರು.</verse>
				<verse number="3">ಯೇಸುಸ್ವಾಮಿ ದೇವಾಲಯಕ್ಕೆ ಎದುರಾಗಿ ಓಲಿವ್ ಗುಡ್ಡದ ಮೇಲೆ ಕುಳಿತಿದ್ದಾಗ ಪೇತ್ರ, ಯಕೋಬ, ಯೊವಾನ್ನ ಹಾಗೂ ಅಂದ್ರೆಯ ಪ್ರತ್ಯೇಕವಾಗಿ ಅವರ ಬಳಿಗೆ ಬಂದು,</verse>
				<verse number="4">“ಇವೆಲ್ಲವೂ ಸಂಭವಿಸುವುದು ಯಾವಾಗ? ಇವೆಲ್ಲವೂ ಸಂಭವಿಸುವ ಸಮಯ ಬಂತೆಂಬುದನ್ನು ನಾವು ತಿಳಿಯಲು ಪೂರ್ವಸೂಚನೆ ಏನು? ನಮಗೆ ತಿಳಿಸಿ,” ಎಂದು ಕೇಳಿಕೊಂಡರು.</verse>
				<verse number="5">ಅದಕ್ಕೆ ಯೇಸು ಹೀಗೆಂದರು: “ಯಾರೂ ನಿಮ್ಮನ್ನು ಮೋಸಗೊಳಿಸದಂತೆ ಜಾಗರೂಕರಾಗಿರಿ.</verse>
				<verse number="6">ಅನೇಕರು ನನ್ನ ಹೆಸರನ್ನು ಇಟ್ಟುಕೊಂಡು ಬಂದು, ‘ನಾನೇ ಕ್ರಿಸ್ತ’, ‘ನಾನೇ ಕ್ರಿಸ್ತ’ ಎನ್ನುತ್ತಾ ಎಷ್ಟೋ ಜನರನ್ನು ತಪ್ಪುದಾರಿಗೆ ಎಳೆಯುವರು.</verse>
				<verse number="7">ಇದಲ್ಲದೆ, ರಣಕಹಳೆಗಳನ್ನೂ ಸಮರಸುದ್ದಿಗಳನ್ನೂ ಕೇಳುವಿರಿ. ಆಗ ನೀವು ಕಳವಳಪಡಬೇಡಿ. ಇವೆಲ್ಲವೂ ಸಂಭವಿಸಲೇಬೇಕು. ಆದರೂ ಇದಿನ್ನೂ ಅಂತ್ಯಕಾಲವಲ್ಲ;</verse>
				<verse number="8">ಜನಾಂಗಕ್ಕೆ ವಿರುದ್ಧ ಜನಾಂಗ, ರಾಷ್ಟ್ರಕ್ಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಇಳಿಯುವುವು. ಅಲ್ಲಲ್ಲಿ ಭೂಕಂಪಗಳು ಆಗುವುವು. ಕ್ಷಾಮ-ಡಾಮರಗಳು ತಲೆದೋರುವುವು. ಇವೆಲ್ಲವೂ ಪ್ರಸವವೇದನೆಯ ಪ್ರಾರಂಭ ಮಾತ್ರ.</verse>
				<verse number="9">“ನಿಮ್ಮ ವಿಷಯದಲ್ಲೂ ಎಚ್ಚರಿಕೆಯಿಂದಿರಿ. ನಿಮ್ಮನ್ನು ನ್ಯಾಯಸ್ಥಾನಗಳಿಗೆ ಎಳೆಯುವರು; ಪ್ರಾರ್ಥನಾಮಂದಿರಗಳಲ್ಲಿ ಹೊಡೆಯುವರು. ನನ್ನ ನಿಮಿತ್ತ ನೀವು ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಬೇಕಾಗುವುದು. ಅವರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ.</verse>
				<verse number="10">ಈ ಮೊದಲು ಎಲ್ಲಾ ಜನಾಂಗಗಳಿಗೆ ಶುಭಸಂದೇಶವನ್ನು ಪ್ರಕಟಿಸಬೇಕಾಗಿದೆ.</verse>
				<verse number="11">ನಿಮ್ಮನ್ನು ಬಂಧಿಸಿ ನ್ಯಾಯವಿಚಾರಣೆಗೆ ಗುರಿಪಡಿಸಿದಾಗ ಏನು ಹೇಳುವುದು ಎಂದು ಮುಂಚಿತವಾಗಿಯೇ ಚಿಂತಾಕ್ರಾಂತರಾಗದಿರಿ. ಆ ಗಳಿಗೆಯಲ್ಲಿ ನಿಮಗೆ ಅನುಗ್ರಹಿಸಲಾಗುವ ಮಾತುಗಳನ್ನೇ ನುಡಿಯಿರಿ. ಏಕೆಂದರೆ, ಮಾತನಾಡುವವರು ನೀವಲ್ಲ, ಪವಿತ್ರಾತ್ಮ.</verse>
				<verse number="12">ಸಹೋದರ ಸಹೋದರನನ್ನೇ, ತಂದೆ ಮಗನನ್ನೇ ಮರಣಕ್ಕೆ ಗುರಿಮಾಡುವರು. ಮಕ್ಕಳು ಹೆತ್ತವರ ಮೇಲೆ ತಿರುಗಿಬಿದ್ದು, ಅವರನ್ನು ಕೊಲ್ಲಿಸುವರು.</verse>
				<verse number="13">ನೀವು ನನ್ನವರು. ಆದುದರಿಂದಲೇ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕೊನೆಯವರೆಗೂ ಸೈರಣೆಯಿಂದಿರುವವನು ಜೀವೋದ್ಧಾರವನ್ನು ಹೊಂದುವನು.</verse>
				<verse number="14">“ವಿನಾಶಕಾರಿಯಾದ ವಿಕಟಮೂರ್ತಿಯು ಇರಬಾರದ ಸ್ಥಾನದಲ್ಲಿ ಇರುವುದನ್ನು ನೀವು ನೋಡುವಾಗ (ಇದನ್ನು ಓದುವವನು ಅರ್ಥಮಾಡಿಕೊಳ್ಳಲಿ) ಜುದೇಯದಲ್ಲಿರುವ ಜನರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ;</verse>
				<verse number="15">ಮಾಳಿಗೆಯ ಮೇಲಿರುವವನು ಕೆಳಕ್ಕೆ ಇಳಿಯಲಿ; ಮನೆಯೊಳಗಿಂದ ಏನನ್ನೂ ತೆಗೆದುಕೊಳ್ಳಲು ಯತ್ನಿಸದೆ ಓಡಿಹೋಗಲಿ;</verse>
				<verse number="16">ಹೊಲಗದ್ದೆಯಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೂ ಹಿಂದಿರುಗದಿರಲಿ.</verse>
				<verse number="17">ಅಯ್ಯೋ, ಆ ದಿನಗಳಲ್ಲಿ ಗರ್ಭಿಣಿಯರ ಮತ್ತು ಹಾಲೂಡಿಸುವ ತಾಯಂದಿರ ಗೋಳೇನು!</verse>
				<verse number="18">ಈ ಸಂಕಷ್ಟಗಳೆಲ್ಲಾ ಚಳಿಗಾಲದಲ್ಲಿ ಸಂಭವಿಸದಂತೆ ಪ್ರಾರ್ಥಿಸಿರಿ.</verse>
				<verse number="19">ಆಗ ಬರಲಿರುವ ಸಂಕಷ್ಟಗಳು ದೈವಸೃಷ್ಟಿಯ ಆದಿಯಿಂದ ಇರಲಿಲ್ಲ. ಇನ್ನು ಮುಂದಕ್ಕೂ ಇರುವುದಿಲ್ಲ.</verse>
				<verse number="20">ಸರ್ವೇಶ್ವರ ಆ ದಿನಗಳ ಅವಧಿಯನ್ನು ಕಡಿಮೆಮಾಡದಿದ್ದರೆ ಯಾವ ಮಾನವನೂ ಉಳಿಯುವಂತಿಲ್ಲ. ಆದರೆ ತಾವು ಆರಿಸಿಕೊಂಡವರ ಪ್ರಯುಕ್ತ ಆ ದಿನಗಳ ಅವಧಿಯನ್ನು ಅವರು ಕಡಿಮೆಮಾಡಿದ್ದಾರೆ.</verse>
				<verse number="21">ಆಗ ಯಾರಾದರೂ ನಿಮಗೆ, ‘ಇಗೋ, ಕ್ರಿಸ್ತ ಇಲ್ಲಿ ಇದ್ದಾನೆ, ಅಗೋ ಅಲ್ಲಿದ್ದಾನೆ,’ ಎಂದು ಹೇಳಿದರೆ ನಂಬಬೇಡಿ.</verse>
				<verse number="22">ಕಪಟ ಉದ್ಧಾರಕರೂ ವಂಚಕಪ್ರವಾದಿಗಳೂ ತಲೆಯೆತ್ತಿಕೊಳ್ಳುವರು. ಅವರು ಪವಾಡಗಳನ್ನು ಮಾಡಿತೋರಿಸಿ, ದೇವರು ಆರಿಸಿಕೊಂಡವರನ್ನೂ ಮೋಸಗೊಳಿಸುವರು.</verse>
				<verse number="23">ನೀವು ಆದರೋ ಜಾಗರೂಕರಾಗಿರಿ. ನಾನು ನಿಮಗೆ ಎಲ್ಲವನ್ನೂ ಮುಂಚಿತವಾಗಿ ತಿಳಿಸಿದ್ದೇನೆ.</verse>
				<verse number="24">“ಆ ದಿನಗಳಲ್ಲಿ ಈ ಸಂಕಷ್ಟಗಳು ಮುಗಿದ ಬಳಿಕ ಸೂರ್ಯನು ಅಂಧಕಾರಮಯನಾಗುವನು;</verse>
				<verse number="25">ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.</verse>
				<verse number="26">ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮೆಯಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು.</verse>
				<verse number="27">ಆತನು ದೇವದೂತರನ್ನು ಜಗತ್ತಿನ ನಾಲ್ಕು ದಿಕ್ಕುಗಳಿಗೂ ಕಳುಹಿಸಿ, ತಾನು ಆರಿಸಿಕೊಂಡವರನ್ನು ವಿಶ್ವದ ಅಷ್ಟದಿಕ್ಕುಗಳಿಂದಲೂ ಒಟ್ಟುಗೂಡಿಸುವನು.</verse>
				<verse number="28">“ಅಂಜೂರದ ಮರದಿಂದ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಎಳೆ ರೆಂಬೆಗಳಲ್ಲಿ ಎಲೆಗಳು ಚಿಗುರುವಾಗ ವಸಂತಕಾಲ ಸಮೀಪಿಸಿತು ಎಂದು ಅರಿತುಕೊಳ್ಳುತ್ತೀರಿ.</verse>
				<verse number="29">ಅಂತೆಯೇ ಇವೆಲ್ಲವೂ ಸಂಭವಿಸುವುದನ್ನು ನೋಡುವಾಗ ನರಪುತ್ರನು ಸಮೀಪಿಸಿದ್ದಾನೆ, ಹೊಸ್ತಿಲಲ್ಲೇ ಇದ್ದಾನೆಂದು ತಿಳಿದುಕೊಳ್ಳಿ.</verse>
				<verse number="30">ಇವೆಲ್ಲವು ಸಂಭವಿಸುವುದಕ್ಕೆ ಮುಂಚೆ ಈ ಪೀಳಿಗೆ ಗತಿಸಿಹೋಗದೆಂದು ಒತ್ತಿಹೇಳುತ್ತೇನೆ.</verse>
				<verse number="31">ಭೂಮ್ಯಾಕಾಶಗಳು ಗತಿಸಿಹೋಗುವುವು, ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುವುವು.</verse>
				<verse number="32">“ಆ ದಿನವಾಗಲಿ, ಆ ಗಳಿಗೆಯಾಗಲಿ, ಯಾವಾಗ ಬರುವುದೆಂದು ಪಿತನ ಹೊರತು ಮತ್ತಾರೂ ಅರಿಯರು. ಸ್ವರ್ಗದಲ್ಲಿರುವ ದೂತರೇ ಆಗಲಿ, ಪುತ್ರನೇ ಆಗಲಿ, ಅದನ್ನು ಅರಿಯರು.</verse>
				<verse number="33">ಆ ಕಾಲ ಯಾವಾಗ ಬರುವುದು ಎಂದು ನಿಮಗೆ ತಿಳಿಯದ್ದರಿಂದ ಎಚ್ಚರಿಕೆಯಿಂದಿರಿ, ಜಾಗರೂಕರಾಗಿರಿ.</verse>
				<verse number="34">ಪ್ರವಾಸಕ್ಕೆಂದು ಯಜಮಾನನೊಬ್ಬನು ಮನೆಬಿಟ್ಟು ಹೋಗುವಾಗ ತನ್ನ ಸೇವಕರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಜವಾಬ್ದಾರಿಕೆಯನ್ನು ವಹಿಸಿ, ದ್ವಾರಪಾಲಕನಿಗೆ ‘ನೀನು ಎಚ್ಚರವಾಗಿರಬೇಕು,’ ಎಂದು ಅಪ್ಪಣೆಕೊಡುವ ರೀತಿಯಲ್ಲಿ ನಾನು ನಿಮಗೆ ಹೇಳುತ್ತಿದ್ದೇನೆ. ಎಚ್ಚರವಾಗಿರಿ;</verse>
				<verse number="35">ಯಜಮಾನನು ಸಂಜೆಯಲ್ಲೋ ಮಧ್ಯರಾತ್ರಿಯಲ್ಲೋ ಕೋಳಿ ಕೂಗುವಾಗಲೋ ಬೆಳಕು ಹರಿಯುವಾಗಲೋ, ಯಾವಾಗ ಬರುವನೆಂಬುದು ನಿಮಗೆ ತಿಳಿಯದು.</verse>
				<verse number="36">ಅನಿರೀಕ್ಷಿತವಾಗಿ ಅವನು ಬಂದಾಗ ನೀವು ನಿದ್ರಿಸುತ್ತಿರುವುದನ್ನು ಕಂಡಾನು!</verse>
				<verse number="37">ನಿಮಗೆ ಹೇಳುವುದನ್ನೇ ಸರ್ವರಿಗೂ ಹೇಳುತ್ತೇನೆ; ಎಚ್ಚರಿಕೆಯಿಂದಿರಿ!” ಎಂದರು.</verse>
			</chapter>
			<chapter number="14">
				<verse number="1">ಪಾಸ್ಕಹಬ್ಬವು, ಅಂದರೆ ಹುಳಿರಹಿತ ರೊಟ್ಟಿಯ ಹಬ್ಬವು ಬರುವುದಕ್ಕೆ ಇನ್ನು ಎರಡು ದಿನಗಳು ಮಾತ್ರ ಇದ್ದವು. ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಉಪಾಯದಿಂದ ಹಿಡಿದು ಕೊಲ್ಲಿಸುವುದಕ್ಕೆ ಹವಣಿಸುತ್ತಿದ್ದರು.</verse>
				<verse number="2">‘ಹಬ್ಬದ ಸಂದರ್ಭದಲ್ಲಿ ನಾವು ಈ ಕಾರ್ಯವನ್ನು ಮಾಡಬಾರದು; ಮಾಡಿದರೆ, ಜನರು ದಂಗೆ ಎದ್ದಾರು,’ ಎಂದು ಮಾತನಾಡಿಕೊಂಡರು.</verse>
				<verse number="3">ಯೇಸುಸ್ವಾಮಿ ಬೆಥಾನಿಯದಲ್ಲಿ, ಕುಷ್ಠರೋಗಿ ಸಿಮೋನನ ಮನೆಯಲ್ಲಿ ಇದ್ದರು. ಅಲ್ಲಿ ಊಟಕ್ಕೆ ಕುಳಿತಿದ್ದಾಗ, ಮಹಿಳೆಯೊಬ್ಬಳು ಅಮೃತಶಿಲೆಯ ಭರಣಿಯ ತುಂಬ ಅತ್ಯಮೂಲ್ಯವಾದ ಜಟಮಾಂಸಿ ಸುಗಂಧತೈಲವನ್ನು ತೆಗೆದುಕೊಂಡು ಬಂದು, ಭರಣಿಯನ್ನು ಒಡೆದು, ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.</verse>
				<verse number="4">ಅಲ್ಲಿದ್ದ ಕೆಲವರು ಇದನ್ನು ಕಂಡು ಸಿಟ್ಟಿನಿಂದ, “ಈ ತೈಲವನ್ನು ಹೀಗೆ ವ್ಯರ್ಥಮಾಡಿದ್ದೇಕೆ?</verse>
				<verse number="5">ಇದನ್ನು ಮುನ್ನೂರು ಬೆಳ್ಳಿ ನಾಣ್ಯಗಳಿಗಿಂತ ಹೆಚ್ಚು ಬೆಲೆಗೆ ಮಾರಿ, ಆ ಹಣವನ್ನು ಬಡವರಿಗೆ ಕೊಡಬಹುದಾಗಿತ್ತಲ್ಲವೆ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು, ಆಕೆಯನ್ನು ನಿಂದಿಸಿದರು.</verse>
				<verse number="6">ಅದಕ್ಕೆ ಯೇಸು, “ಈಕೆಯನ್ನು ಸುಮ್ಮನೆ ಬಿಡಿ, ಕಿರುಕುಳ ಕೊಡಬೇಡಿ; ಈಕೆ ನನಗೊಂದು ಸತ್ಕಾರ್ಯವನ್ನೇ ಮಾಡಿದ್ದಾಳೆ;</verse>
				<verse number="7">ಬಡಬಗ್ಗರು ನಿಮ್ಮ ಸಂಗಡ ಯಾವಾಗಲೂ ಇರುತ್ತಾರೆ. ಅವರಿಗೆ ಯಾವಾಗ ಬೇಕಾದರೂ ನೀವು ಸಹಾಯ ಮಾಡಬಹುದು. ಆದರೆ ನಾನು ನಿಮ್ಮ ಸಂಗಡ ಯಾವಾಗಲೂ ಇರುವುದಿಲ್ಲ.</verse>
				<verse number="8">ತನ್ನಿಂದ ಏನು ಸಾಧ್ಯವೋ ಅದನ್ನು ಈಕೆ ಮಾಡಿದ್ದಾಳೆ; ನನ್ನ ದೇಹವನ್ನು ಮುಂಚಿತವಾಗಿಯೇ ಸುಗಂಧ ತೈಲದಿಂದ ಲೇಪಿಸಿ ಅದನ್ನು ಶವಸಂಸ್ಕಾರಕ್ಕಾಗಿ ಸಿದ್ಧಪಡಿಸಿದ್ದಾಳೆ.</verse>
				<verse number="9">ಜಗತ್ತಿನಾದ್ಯಂತ ಎಲ್ಲೆಲ್ಲಿ ಶುಭಸಂದೇಶವನ್ನು ಪ್ರಕಟಿಸಲಾಗುವುದೋ ಅಲ್ಲೆಲ್ಲಾ ಈ ಸತ್ಕಾರ್ಯವನ್ನು ಈಕೆಯ ಸವಿನೆನಪಿಗಾಗಿ ಸಾರಲಾಗುವುದು, ಇದು ನಿಶ್ಚಯ,” ಎಂದರು.</verse>
				<verse number="10">ಇದಾದಮೇಲೆ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತಿನ ಯೂದನು ಯೇಸುಸ್ವಾಮಿಯನ್ನು ಹಿಡಿದುಕೊಡುವ ದುರುದ್ದೇಶದಿಂದ ಮುಖ್ಯಯಾಜಕರ ಬಳಿಗೆ ಹೋದನು.</verse>
				<verse number="11">ಇದರಿಂದ ಆ ಯಾಜಕರಿಗೆ ಅತ್ಯಾನಂದವಾಯಿತು. ಅವನಿಗೆ ಹಣಕೊಡುವುದಾಗಿ ಅವರು ಮಾತುಕೊಟ್ಟರು. ಯೇಸುವನ್ನು ಹಿಡಿದೊಪ್ಪಿಸಲು ಅವನು ಸಂದರ್ಭ ಕಾಯತೊಡಗಿದನು.</verse>
				<verse number="12">ಅಂದು ಹುಳಿರಹಿತ ರೊಟ್ಟಿಯ ಹಬ್ಬದ ಮೊದಲನೆಯ ದಿನ. ಅಂದರೆ, ಪಾಸ್ಕಹಬ್ಬದ ಕುರಿಮರಿಯನ್ನು ಕೊಯ್ಯುವ ದಿನ. ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ತಮಗೆ ಪಾಸ್ಕಭೋಜನವನ್ನು ನಾವು ಎಲ್ಲಿ ಸಿದ್ಧಪಡಿಸಬೇಕೆನ್ನುತ್ತೀರಿ?” ಎಂದು ಕೇಳಿದರು.</verse>
				<verse number="13">ಯೇಸು ಅವರಲ್ಲಿ ಇಬ್ಬರಿಗೆ, “ನೀವು ಪಟ್ಟಣಕ್ಕೆ ಹೋಗಿರಿ. ಅಲ್ಲಿ ನೀರಿನ ಕೊಡವನ್ನು ಹೊತ್ತವನೊಬ್ಬನು ನಿಮ್ಮನ್ನು ಎದುರುಗೊಳ್ಳುವನು.</verse>
				<verse number="14">ಅವನ ಹಿಂದೆಯೇ ಹೋಗಿ, ಅವನು ಯಾವ ಮನೆಗೆ ಹೋಗುತ್ತಾನೋ ಆ ಮನೆಯ ಯಜಮಾನನಿಗೆ, “ನಮ್ಮ ಗುರು, ‘ನನ್ನ ಶಿಷ್ಯರ ಜೊತೆಯಲ್ಲಿ ಪಾಸ್ಕಭೋಜನ ಮಾಡಲು ನನಗೆ ಕೊಠಡಿ ಎಲ್ಲಿ?’ ಎಂದು ಕೇಳುತ್ತಾರೆ,” ಎಂದು ವಿಚಾರಿಸಿರಿ.</verse>
				<verse number="15">ಅವನು ಮೇಲುಪ್ಪರಿಗೆಯಲ್ಲಿ ಸಿದ್ಧವಾಗಿರುವ ಹಾಗೂ ಸುಸಜ್ಜಿತವಾದ ದೊಡ್ಡ ಕೊಠಡಿಯನ್ನು ತೋರಿಸುವನು. ಅಲ್ಲಿ ನಮಗೆ ಊಟ ಸಿದ್ಧಮಾಡಿರಿ,” ಎಂದು ಹೇಳಿಕಳುಹಿಸಿದರು.</verse>
				<verse number="16">ಅವರು ಪಟ್ಟಣಕ್ಕೆ ಹೋಗಿ, ಯೇಸು ತಮಗೆ ಹೇಳಿದ ಪ್ರಕಾರ ಎಲ್ಲಾ ವ್ಯವಸ್ಥಿತವಾಗಿರುವುದನ್ನು ಕಂಡು, ಪಾಸ್ಕಭೋಜನವನ್ನು ತಯಾರಿಸಿದರು.</verse>
				<verse number="17">ಸಂಜೆಯಾದಾಗ, ಯೇಸು ಹನ್ನೆರಡು ಮಂದಿ ಶಿಷ್ಯರೊಡನೆ ಅಲ್ಲಿಗೆ ಬಂದರು.</verse>
				<verse number="18">ಅವರೆಲ್ಲರೂ ಊಟಮಾಡುತ್ತಿದ್ದಾಗ ಯೇಸುಸ್ವಾಮಿ, “ನನ್ನ ಸಂಗಡ ಊಟಮಾಡುವ ನಿಮ್ಮಲ್ಲೇ ಒಬ್ಬನು ನನಗೆ ದ್ರೋಹ ಬಗೆಯುವನು, ಎಂದು ನಿಮಗೆ ಖಂಡಿತವಾಗಿ ಹೇಳುತ್ತೇನೆ,” ಎಂದರು.</verse>
				<verse number="19">ಆಗ ಶಿಷ್ಯರು ಕಳವಳಗೊಂಡು, ‘ಅಂಥವನು ನಾನೋ? ನಾನೋ?’ ಎಂದು ಒಬ್ಬರಾದ ಮೇಲೇ ಒಬ್ಬರು ಕೇಳತೊಡಗಿದರು.</verse>
				<verse number="20">ಅದಕ್ಕೆ ಯೇಸು, “ಊಟದ ಬಟ್ಟಲಲ್ಲಿ ನನ್ನೊಡನೆ ರೊಟ್ಟಿಯನ್ನು ಅದ್ದುತ್ತಿರುವ ಇದೇ ಹನ್ನೆರಡುಮಂದಿಯಲ್ಲಿ ಒಬ್ಬನು ಅವನು.</verse>
				<verse number="21">ನರಪುತ್ರನೇನೋ ಪವಿತ್ರಗ್ರಂಥದಲ್ಲಿ ಬರೆದಿರುವಂತೆ ಹೊರಟುಹೋಗುತ್ತಾನೆ, ನಿಜ. ಆದರೆ ನರಪುತ್ರನಿಗೆ ದ್ರೋಹ ಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು!” ಎಂದರು.</verse>
				<verse number="22">ಅವರೆಲ್ಲರೂ ಊಟಮಾಡುತ್ತಿರುವಾಗ, ಯೇಸುಸ್ವಾಮಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತುತಿಮಾಡಿ, ಅದನ್ನು ಮುರಿದು, ಶಿಷ್ಯರಿಗೆ ಕೊಡುತ್ತಾ, “ಇದನ್ನು ಸ್ವೀಕರಿಸಿರಿ, ಇದು ನನ್ನ ಶರೀರ,” ಎಂದರು.</verse>
				<verse number="23">ಬಳಿಕ ಪಾನಪಾತ್ರೆಯನ್ನು ತೆಗೆದುಕೊಂಡು ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟರು. ಅವರೆಲ್ಲರೂ ಅದರಿಂದ ಕುಡಿದರು.</verse>
				<verse number="24">ಯೇಸು ಅವರಿಗೆ, “ಇದು ನನ್ನ ರಕ್ತ, ಸಮಸ್ತ ಜನರಿಗಾಗಿ ಸುರಿಸಲಾಗುವ ಒಡಂಬಡಿಕೆಯ ರಕ್ತ</verse>
				<verse number="25">ನಾನು ದೇವರ ಸಾಮ್ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.</verse>
				<verse number="26">ಬಳಿಕ ಅವರೆಲ್ಲರೂ ಕೀರ್ತನೆ ಹಾಡಿ, ಓಲಿವ್ ಗುಡ್ಡಕ್ಕೆ ಹೊರಟರು.</verse>
				<verse number="27">ಅನಂತರ ಯೇಸುಸ್ವಾಮಿ ಶಿಷ್ಯರಿಗೆ, “ ‘ಕುರುಬನನ್ನು ಕೊಲ್ಲುವೆನು ಕುರಿಗಳು ಚದರಿಹೋಗುವುವು’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವಂತೆ ನೀವು ಎಲ್ಲರೂ ನನ್ನಲ್ಲಿ ವಿಶ್ವಾಸ ಕಳೆದುಕೊಂಡು ಹಿಮ್ಮೆಟ್ಟುವಿರಿ.</verse>
				<verse number="28">ನಾನಾದರೋ, ಪುನರುತ್ಥಾನಹೊಂದಿ ನಿಮಗಿಂತ ಮುಂದಾಗಿ ಗಲಿಲೇಯಕ್ಕೆ ಹೋಗುವೆನು,” ಎಂದರು.</verse>
				<verse number="29">ಇದನ್ನು ಕೇಳಿದ ಪೇತ್ರನು, “ಎಲ್ಲರೂ ತಮ್ಮಲ್ಲಿ ವಿಶ್ವಾಸ ಕಳೆದುಕೊಂಡು ಹಿಮ್ಮೆಟ್ಟಿದರೂ ನಾನು ಮಾತ್ರ ಹಾಗೆ ಮಾಡೆನು,” ಎಂದನು.</verse>
				<verse number="30">ಅದಕ್ಕೆ ಯೇಸು, “ಇದೇ ರಾತ್ರಿ ಕೋಳಿ ಎರಡು ಸಾರಿ ಕೂಗುವ ಮೊದಲೇ, ‘ಆತನನ್ನು ನಾನರಿಯೆ’ ಎಂದು ನೀನು ಮೂರು ಸಾರಿ ನನ್ನನ್ನು ನಿರಾಕರಿಸುವೆ, ಇದು ಖಂಡಿತ,” ಎಂದರು.</verse>
				<verse number="31">ಆದರೆ ಪೇತ್ರನು, “ನಾನು ತಮ್ಮೊಡನೆ ಸಾಯಬೇಕಾಗಿ ಬಂದರೂ ತಮ್ಮನ್ನು ಮಾತ್ರ ನಿರಾಕರಿಸೆನು,” ಎಂದು ಆವೇಶಪೂರಿತನಾಗಿ ನುಡಿದನು. ಹಾಗೆಯೇ ಉಳಿದವರೂ ಹೇಳಿದರು.</verse>
				<verse number="32">ತರುವಾಯ ಅವರೆಲ್ಲರೂ ಗೆತ್ಸೆಮನೆ ಎಂಬ ತೋಪಿಗೆ ಬಂದರು.</verse>
				<verse number="33">ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ನಾನು ಪ್ರಾರ್ಥನೆಮಾಡಿ ಬರುವವರೆಗೂ ನೀವು ಇಲ್ಲೇ ಕುಳಿತಿರಿ,” ಎಂದು ಹೇಳಿ ಪೇತ್ರ ಯಕೋಬ ಮತ್ತು ಯೊವಾನ್ನರನ್ನು ಮಾತ್ರ ತಮ್ಮ ಜೊತೆಯಲ್ಲಿ ಕರೆದುಕೊಂಡು ಮುಂದಕ್ಕೆ ಹೋದರು.</verse>
				<verse number="34">ಅಲ್ಲಿ ಅತೀವ ದುಃಖದಿಂದ ಚಿಂತಾಕ್ರಾಂತರಾಗಿ, “ನನ್ನ ಮನೋವೇದನೆ ಪ್ರಾಣಹಿಂಡುವಷ್ಟು ತೀವ್ರವಾಗಿದೆ; ನೀವು ಇಲ್ಲೇ ಇದ್ದು ಎಚ್ಚರವಾಗಿರಿ,” ಎಂದರು.</verse>
				<verse number="35">ಅನಂತರ ಅಲ್ಲಿಂದ ಇನ್ನೂ ಸ್ವಲ್ಪ ಮುಂದಕ್ಕೆ ಹೋಗಿ, ನೆಲಕ್ಕೆ ಕುಸಿದು, ಪ್ರಾರ್ಥಿಸುತ್ತಾ, “ಸಾಧ್ಯವಾದರೆ, ಈ ವಿಷಮ ಗಳಿಗೆಯು ನನ್ನಿಂದ ದೂರವಾಗಲಿ,” ಎಂದು ದೇವರನ್ನು ಬಿನ್ನವಿಸಿದರು.</verse>
				<verse number="36">ಅನಂತರ, “ಅಪ್ಪಾ, ಪಿತನೇ, ನಿಮಗೆ ಎಲ್ಲವೂ ಸಾಧ್ಯ. ಈ ಕಷ್ಟದ ಕೊಡವನ್ನು ನನ್ನಿಂದ ತೆಗೆದುಬಿಡಿ. ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತವಿದ್ದಂತೆಯೇ ಆಗಲಿ,” ಎಂದರು.</verse>
				<verse number="37">ಅನಂತರ ಹಿಂದಿರುಗಿ ಬಂದು, ಆ ಮೂವರು ಶಿಷ್ಯರು ನಿದ್ರಿಸುತ್ತಿದ್ದುದನ್ನು ಕಂಡು, ಪೇತ್ರನಿಗೆ, “ಸಿಮೋನನೇ, ನಿದ್ದೆಮಾಡುತ್ತಿರುವಿಯೋ! ಒಂದು ಗಂಟೆಯಾದರೂ ಎಚ್ಚರವಾಗಿರಲು ನಿನಗೆ ಸಾಧ್ಯವಾಗದೆ ಹೋಯಿತೋ!</verse>
				<verse number="38">ಪ್ರಲೋಭನೆಗೆ ಒಳಗಾಗದಂತೆ ಎಚ್ಚರದಿಂದ ಇದ್ದು ಪ್ರಾರ್ಥನೆಮಾಡಿ, ಆತ್ಮಕ್ಕೇನೋ ಆಸಕ್ತಿ ಇದೆ; ಆದರೆ ದೇಹಕ್ಕೆ ಶಕ್ತಿ ಸಾಲದು,” ಎಂದರು.</verse>
				<verse number="39">ಮರಳಿ ಹಿಂದಕ್ಕೆ ಹೋಗಿ, ಮೊದಲು ಪ್ರಾರ್ಥನೆ ಮಾಡಿದಂತೆಯೇ ಮಾಡಿದರು.</verse>
				<verse number="40">ಪುನಃ ಶಿಷ್ಯರ ಬಳಿಗೆ ಬಂದಾಗ, ಅವರು ಇನ್ನೂ ನಿದ್ರಾವಸ್ಥೆಯಲ್ಲಿದ್ದರು; ಅವರ ಕಣ್ಣುಗಳು ಬಹುಭಾರವಾಗಿದ್ದವು. ಯೇಸುವಿಗೆ ಏನು ಉತ್ತರಕೊಡಬೇಕೆಂದು ಅವರಿಗೆ ತಿಳಿಯದೆಹೋಯಿತು.</verse>
				<verse number="41">ಯೇಸು ಮೂರನೆಯ ಸಾರಿ ಅವರ ಬಳಿಗೆ ಬಂದು, “ನೀವು ಇನ್ನೂ ನಿದ್ರಿಸಿ ವಿಶ್ರಮಿಸುತ್ತಿರುವಿರಾ? ಸಾಕು, ಸಮಯವು ಸಮೀಪಿಸಿತು;</verse>
				<verse number="42">ನರಪುತ್ರನು ದುರ್ಜನರ ಕೈವಶ ಆಗಲಿದ್ದಾನೆ. ಎದ್ದೇಳಿ, ಹೋಗೋಣ. ಇಗೋ, ನೋಡಿ, ನನಗೆ ದ್ರೋಹ ಬಗೆಯುವವನು ಹತ್ತಿರವೇ ಇದ್ದಾನೆ,” ಎಂದರು.</verse>
				<verse number="43">ಯೇಸುಸ್ವಾಮಿ ಇನ್ನೂ ಮಾತನಾಡುತ್ತ ಇರುವಾಗಲೇ, ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದಿದ್ದ ಒಂದು ಗುಂಪು ಅವನೊಂದಿಗಿತ್ತು. ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಪ್ರಮುಖರೂ ಅವರನ್ನು ಕಳುಹಿಸಿದ್ದರು.</verse>
				<verse number="44">ಗುರುದ್ರೋಹಿಯಾದ ಯೂದನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ, ಆತನೇ ಆ ವ್ಯಕ್ತಿ, ಆತನನ್ನು ಬಂಧಿಸಿ, ಭದ್ರವಾಗಿ ಕರೆದೊಯ್ಯಿರಿ,” ಎಂದು ಮೊದಲೇ ಸೂಚನೆಕೊಟ್ಟಿದ್ದನು.</verse>
				<verse number="45">ಅದರಂತೆಯೇ ಅವನು ಅಲ್ಲಿಗೆ ಬಂದಕೂಡಲೆ ಯೇಸುವಿನ ಹತ್ತಿರಕ್ಕೆ ನೇರವಾಗಿ ಹೋಗಿ, ‘ಗುರುದೇವಾ’, ಎಂದು ಹೇಳುತ್ತಾ ಅವರಿಗೆ ಮುದ್ದಿಟ್ಟನು.</verse>
				<verse number="46">ತಕ್ಷಣ ಆ ಜನರು ಯೇಸುವನ್ನು ಹಿಡಿದು ಬಂಧಿಸಿದರು.</verse>
				<verse number="47">ಆಗ ಸಮೀಪದಲ್ಲಿದ್ದವರಲ್ಲಿ ಒಬ್ಬನು, ತನ್ನ ಖಡ್ಗವನ್ನು ಹಿರಿದು, ಪ್ರಧಾನಯಾಜಕನ ಆಳನ್ನು ಹೊಡೆದು, ಅವನ ಕಿವಿಯನ್ನು ಕತ್ತರಿಸಿಬಿಟ್ಟನು.</verse>
				<verse number="48">ಯೇಸುಸ್ವಾಮಿ ಆ ಗುಂಪಿಗೆ, “ದರೋಡೆಗಾರರನ್ನು ಹಿಡಿಯುವುದಕ್ಕೋ ಎಂಬಂತೆ ನನ್ನನ್ನು ಬಂಧಿಸಲು ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದುಕೊಂಡು ಬರಬೇಕಾಗಿತ್ತೇ? ನಾನು ಪ್ರತೀದಿನ ಮಹಾದೇವಾಲಯದಲ್ಲಿ ನಿಮ್ಮ ನಡುವೆಯೇ ಬೋಧನೆಮಾಡುತ್ತಾ ಇದ್ದೆ; ಆಗ ನೀವು ನನ್ನನ್ನು ಬಂಧಿಸಲಿಲ್ಲ.</verse>
				<verse number="49">ಆದರೆ ಪವಿತ್ರಗ್ರಂಥದಲ್ಲಿ ಬರೆದಿರುವುದು ನೆರವೇರುವಂತೆ ಇದೆಲ್ಲಾ ಸಂಭವಿಸಿದೆ,” ಎಂದರು.</verse>
				<verse number="50">ಆಗ ಶಿಷ್ಯರೆಲ್ಲರೂ ಯೇಸುವನ್ನು ತೊರೆದು ಪಲಾಯನ ಮಾಡಿದರು.</verse>
				<verse number="51">ಮೈಮೇಲೆ ಒಂದು ದುಪ್ಪಟಿಯನ್ನು ಮಾತ್ರ ಸುತ್ತಿಕೊಂಡಿದ್ದ ಯುವಕನೊಬ್ಬನು ಯೇಸುಸ್ವಾಮಿಯನ್ನು ಹಿಂಬಾಲಿಸುತ್ತಿದ್ದನು.</verse>
				<verse number="52">ಅವನನ್ನು ಹಿಡಿಯಲು ಆ ಜನರು ಯತ್ನಿಸಿದಾಗ, ಅವನು ಆ ದುಪ್ಪಟಿಯನ್ನು ಅವರ ಕೈಯಲ್ಲೇ ಬಿಟ್ಟು, ಬೆತ್ತಲೆಯಾಗಿ ಓಡಿಹೋದನು.</verse>
				<verse number="53">ಅನಂತರ ಆ ಜನರು ಯೇಸುಸ್ವಾಮಿಯನ್ನು ಪ್ರಧಾನ ಯಾಜಕನ ಬಳಿಗೆ ಕರೆದೊಯ್ದರು. ಅಲ್ಲಿ ಎಲ್ಲಾ ಮುಖ್ಯಯಾಜಕರು, ಪ್ರಮುಖರು ಹಾಗು ಧರ್ಮಶಾಸ್ತ್ರಿಗಳು ಸಭೆ ಸೇರಿದ್ದರು.</verse>
				<verse number="54">ಪೇತ್ರನಾದರೋ ದೂರದಿಂದ ಯೇಸುವನ್ನು ಹಿಂಬಾಲಿಸುತ್ತಿದ್ದನು. ಅವನು ಪ್ರಧಾನಯಾಜಕನ ಭವನದವರೆಗೂ ಬಂದು ಹೊರಾಂಗಣದಲ್ಲಿ, ಪಹರೆಯವರ ಜೊತೆಯಲ್ಲಿ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು.</verse>
				<verse number="55">ಇತ್ತ ಮುಖ್ಯಯಾಜಕರು ಮತ್ತು ಉಚ್ಛನ್ಯಾಯಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಅವರ ವಿರುದ್ಧ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ.</verse>
				<verse number="56">ಅನೇಕರು ಮುಂದೆ ಬಂದು, ಅವರ ವಿರುದ್ಧ ಸುಳ್ಳು ಸಾಕ್ಷಿ ಹೇಳಿದರಾದರೂ ಅವರ ಸಾಕ್ಷ್ಯ ಒಂದಕ್ಕೊಂದು ಸರಿಬೀಳಲಿಲ್ಲ.</verse>
				<verse number="57">ಕೆಲವರು ಎದ್ದುನಿಂತು, “ ‘ಕೈಗಳಿಂದ ಕಟ್ಟಿರುವ ಈ ಮಹಾದೇವಾಲಯವನ್ನು ನಾನು ಕೆಡವಿ, ಕೈಗಳಿಂದ ಕಟ್ಟದ ಇನ್ನೊಂದನ್ನು ಮೂರು ದಿನಗಳಲ್ಲಿ ನಿರ್ಮಿಸುತ್ತೇನೆ,’ ಎಂದು ಇವನು ಹೇಳಿದ್ದನ್ನು ಕೇಳಿದ್ದೇವೆ,” ಎಂಬುದಾಗಿ ಸುಳ್ಳುಸಾಕ್ಷಿ ಹೇಳಿದರು.</verse>
				<verse number="58"></verse>
				<verse number="59">ಈ ಸಾಕ್ಷಿಗಳ ಮಾತುಗಳು ಒಂದಕ್ಕೊಂದು ಸರಿಬೀಳಲಿಲ್ಲ.</verse>
				<verse number="60">ಆಗ ಪ್ರಧಾನಯಾಜಕನು ಸಭೆಯ ಮಧ್ಯೆ ಎದ್ದುನಿಂತು, ಯೇಸುವನ್ನು ನೋಡಿ, “ಈ ಜನರು ನಿನಗೆ ವಿರುದ್ಧವಾಗಿ ತಂದಿರುವ ಆರೋಪಣೆಗಳನ್ನು ಕೇಳುತ್ತಿರುವೆಯಾ? ಇವುಗಳಿಗೆ ನಿನ್ನ ಉತ್ತರವೇನು?” ಎಂದು ಪ್ರಶ್ನಿಸಿದನು.</verse>
				<verse number="61">ಆದರೆ ಯೇಸು ಮೌನವಾಗಿದ್ದರು. ಯಾವ ಉತ್ತರವನ್ನೂ ಕೊಡಲಿಲ್ಲ. ಪ್ರಧಾನಯಾಜಕನು ಪುನಃ, “ಸ್ತುತ್ಯ ದೇವರ ಪುತ್ರ ಹಾಗೂ ಅಭಿಷಿಕ್ತನಾದ ಲೋಕೋದ್ಧಾರಕ ನೀನೋ?” ಎಂದು ಕೇಳಿದನು.</verse>
				<verse number="62">ಅದಕ್ಕೆ ಯೇಸು, “ಹೌದು ನಾನೇ, ಸರ್ವಶಕ್ತ ದೇವರ ಬಲಗಡೆ ನರಪುತ್ರನು ಆಸೀನನಾಗಿ ಇರುವುದನ್ನೂ ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ಕಾಣುವಿರಿ,” ಎಂದರು.</verse>
				<verse number="63">ಒಡನೆಯೇ, ಪ್ರಧಾನಯಾಜಕನು ಕೋಪದಿಂದ ತನ್ನ ಉಡುಪನ್ನೇ ಹರಿದುಕೊಂಡನು. “ಇನ್ನು ನಮಗೆ ಸಾಕ್ಷಿಗಳೇತಕ್ಕೆ? ಇವನಾಡಿದ ದೇವದೂಷಣೆಯನ್ನು ನೀವೇ ಕೇಳಿದ್ದೀರಿ! ನಿಮ್ಮ ಅಭಿಪ್ರಾಯ ಏನು?” ಎಂದು ಸಭೆಯನ್ನು ಕೇಳಿದನು.</verse>
				<verse number="64">ಅವರೆಲ್ಲರೂ, “ಇವನಿಗೆ ಮರಣದಂಡನೆ ಆಗಬೇಕು,” ಎಂದು ತೀರ್ಮಾನವಿತ್ತರು.</verse>
				<verse number="65">ಅನಂತರ, ಅವರಲ್ಲಿ ಕೆಲವರು ಯೇಸುವಿನ ಮೇಲೆ ಉಗುಳಿದರು. ಅವರ ಮುಖಕ್ಕೆ ಮುಸುಕುಹಾಕಿ, ಅವರನ್ನು ಗುದ್ದಿ, “ಗುದ್ದಿದವರು ಯಾರು? ಪ್ರವಾದಿಸು ನೋಡೋಣ,” ಎನ್ನುತ್ತಿದ್ದರು. ಇದಲ್ಲದೆ ಅಲ್ಲಿದ್ದ ಪಹರೆಯವರು ಅವರಿಗೆ ಏಟಿನ ಮೇಲೆ ಏಟು ಕೊಟ್ಟು ತಮ್ಮ ವಶಕ್ಕೆ ತೆಗೆದುಕೊಂಡರು.</verse>
				<verse number="66">ಪೇತ್ರನು ಹೊರಾಂಗಣದಲ್ಲಿ ಇದ್ದನು. ಆಗ ಪ್ರಧಾನಯಾಜಕನ ಸೇವಕಿಯೊಬ್ಬಳು ಅಲ್ಲಿಗೆ ಬಂದಳು.</verse>
				<verse number="67">ಚಳಿಕಾಯಿಸಿಕೊಳ್ಳುತ್ತಿದ್ದ ಪೇತ್ರನನ್ನು ಆಕೆ ದಿಟ್ಟಿಸಿ ನೋಡಿ, “ನೀನು ಸಹ ಆ ನಜರೇತಿನ ಯೇಸುವಿನ ಸಂಗಡ ಇದ್ದವನು,” ಎಂದಳು.</verse>
				<verse number="68">ಪೇತ್ರನು ಆಕೆ ಹೇಳಿದ್ದನ್ನು ನಿರಾಕರಿಸಿದನು. “ನೀನು ಏನು ಹೇಳುತ್ತಿದ್ದೀಯೋ ನನಗೆ ಗೊತ್ತಿಲ್ಲ; ನನಗೇನೂ ತಿಳಿಯದು,” ಎಂದುಬಿಟ್ಟನು. ಅಲ್ಲಿಂದ ಎದ್ದು ದ್ವಾರಮಂಟಪಕ್ಕೆ ಹೋದನು (ಆಗ ಕೋಳಿ ಕೂಗಿತು).</verse>
				<verse number="69">ಅಲ್ಲಿಯೂ ಆಕೆ ಅವನನ್ನು ಕಂಡು ಹತ್ತಿರವಿದ್ದವರಿಗೆ, “ಇವನು ಸಹ ಅವರಲ್ಲಿ ಒಬ್ಬನು,” ಎಂದು ತಿಳಿಸಿದಳು. ಪೇತ್ರನು ಪುನಃ ಆಕೆ ಹೇಳಿದ್ದನ್ನು ನಿರಾಕರಿಸಿದನು.</verse>
				<verse number="70">ಸ್ವಲ್ಪ ಹೊತ್ತಾದ ಮೇಲೆ ಅಲ್ಲಿದ್ದವರು ಪೇತ್ರನಿಗೆ, “ಖಂಡಿತವಾಗಿ ನೀನು ಅವರಲ್ಲಿ ಒಬ್ಬನು. ಏಕೆಂದರೆ, ನೀನೂ ಗಲಿಲೇಯದವನೇ,” ಎಂದರು.</verse>
				<verse number="71">ಆಗ ಪೇತ್ರನು, “ನೀವು ಹೇಳುವ ಆ ಮನುಷ್ಯ ಯಾರೆಂದು ನಾನರಿಯೆ,” ಎಂದು ಹೇಳಿ ಆಣೆಯಿಡುವುದಕ್ಕೂ ಶಪಿಸಿಕೊಳ್ಳುವುದಕ್ಕೂ ತೊಡಗಿದನು. ಕೂಡಲೇ ಕೋಳಿ ಎರಡನೆಯ ಸಾರಿ ಕೂಗಿತು.</verse>
				<verse number="72">“ಕೋಳಿ ಎರಡು ಸಾರಿ ಕೂಗುವ ಮೊದಲೇ ‘ಆತನನ್ನು ನಾನರಿಯೆ’ ಎಂದು ಮೂರು ಬಾರಿ ನನ್ನನ್ನು ನಿರಾಕರಿಸುವೆ” ಎಂದು ಯೇಸು ಹೇಳಿದ್ದ ಮಾತು ಪೇತ್ರನ ನೆನಪಿಗೆ ಬಂದಿತು. ದುಃಖದ ಕಟ್ಟೆಯೊಡೆದು ಆತನು ಬಿಕ್ಕಿಬಿಕ್ಕಿ ಅತ್ತನು.</verse>
			</chapter>
			<chapter number="15">
				<verse number="1">ಬೆಳಗಾದ ಕೂಡಲೆ, ಮುಖ್ಯಯಾಜಕರೂ ಪ್ರಮುಖರೂ ಧರ್ಮಶಾಸ್ತ್ರಿಗಳೂ ಹಾಗು ನ್ಯಾಯಸಭೆಯ ಇತರ ಸದಸ್ಯರೂ ಒಟ್ಟುಗೂಡಿ ಸಮಾಲೋಚನೆ ನಡೆಸಿದರು. ಯೇಸುಸ್ವಾಮಿಗೆ ಬೇಡಿಹಾಕಿ ಪಿಲಾತನ ಬಳಿಗೆ ಕರೆದೊಯ್ದು ಆತನ ವಶಕ್ಕೊಪ್ಪಿಸಿದರು.</verse>
				<verse number="2">ಪಿಲಾತನು ಯೇಸುವನ್ನು, “ನೀನು ಯೆಹೂದ್ಯರ ಅರಸನೋ?” ಎಂದು ಪ್ರಶ್ನಿಸಿದನು. “ಅದು ನಿಮ್ಮ ಬಾಯಿಂದಲೇ ಬಂದಿದೆ,” ಎಂದು ಯೇಸು ಮರುನುಡಿದರು.</verse>
				<verse number="3">ಮುಖ್ಯಯಾಜಕರು ಯೇಸುವಿನ ಮೇಲೆ ಅನೇಕ ಆಪಾದನೆಗಳನ್ನು ಹೊರಿಸುತ್ತಿದ್ದರು.</verse>
				<verse number="4">ಆದುದರಿಂದ ಪಿಲಾತನು ಪುನಃ ಯೇಸುವನ್ನು, “ಇವರು ಇಷ್ಟೊಂದು ಆಪಾದನೆಗಳನ್ನು ನಿನ್ನ ಮೇಲೆ ಹೊರಿಸುತ್ತಿರುವಾಗ ನೀನು ಯಾವ ಉತ್ತರವನ್ನೂ ಕೊಡುವುದಿಲ್ಲವೆ?” ಎಂದು ಕೇಳಿದನು.</verse>
				<verse number="5">ಆದರೆ ಯೇಸು ಇನ್ನೊಂದು ಮಾತನ್ನೂ ಆಡದೆ ಮೌನವಾಗಿದ್ದರು. ಇದನ್ನು ಕಂಡು ಪಿಲಾತನು ಆಶ್ಚರ್ಯಪಟ್ಟನು.</verse>
				<verse number="6">ಪ್ರತಿ ಪಾಸ್ಕಹಬ್ಬದ ಸಂದರ್ಭದಲ್ಲಿ, ಜನರು ಕೇಳಿಕೊಂಡ ಒಬ್ಬ ಸೆರೆಯಾಳನ್ನು ಬಿಡುಗಡೆ ಮಾಡುವುದು ಪಿಲಾತನ ಪದ್ಧತಿಯಾಗಿತ್ತು.</verse>
				<verse number="7">ದಂಗೆಯೊಂದರಲ್ಲಿ ಕೊಲೆ ಮಾಡಿದ್ದ ಕೆಲವರು ಈ ಸಮಯದಲ್ಲಿ ಸೆರೆಮನೆಯಲ್ಲಿ ಇದ್ದರು. ಇವರೊಡನೆ ಬರಬ್ಬ ಎಂಬವನೂ ಸೆರೆಯಲ್ಲಿದ್ದನು.</verse>
				<verse number="8">ಜನರ ಗುಂಪು ಪಿಲಾತನ ಬಳಿಗೆ ಹೋಗಿ, ಪದ್ಧತಿಯಂತೆ ಈ ವರ್ಷವೂ ಒಬ್ಬ ಕೈದಿಯನ್ನು ತಮಗೆ ಬಿಟ್ಟುಕೊಡಬೇಕೆಂದು ಕೇಳಿದಾಗ ಪಿಲಾತನು,</verse>
				<verse number="9">“ಯೆಹೂದ್ಯರ ಅರಸನನ್ನು ನಾನು ನಿಮಗೆ ಬಿಟ್ಟುಕೊಡಬಹುದೋ?\ ಎಂದು ಅವರನ್ನು ಕೇಳಿದನು.</verse>
				<verse number="10">ಏಕೆಂದರೆ, ಮುಖ್ಯಯಾಜಕರು ಅಸೂಯೆಯಿಂದಲೇ ಯೇಸುವನ್ನು ತನಗೆ ಒಪ್ಪಿಸಿದ್ದಾರೆ ಎಂದು ಅವನಿಗೆ ಚೆನ್ನಾಗಿ ತಿಳಿದಿತ್ತು.</verse>
				<verse number="11">ಆದರೆ ಬರಬ್ಬನನ್ನೇ ಬಿಡುಗಡೆ ಮಾಡುವಂತೆ ಪಿಲಾತನನ್ನು ಕೇಳಿಕೊಳ್ಳಬೇಕೆಂದು ಮುಖ್ಯಯಾಜಕರು ಜನರನ್ನು ಪ್ರಚೋದಿಸಿದರು.</verse>
				<verse number="12">ಆಗ ಪಿಲಾತನು ಪುನಃ, “ಹಾಗಾದರೆ ಯೆಹೂದ್ಯರ ಅರಸನೆಂದು ನೀವು ಕರೆಯುವ ಈತನನ್ನು ನಾನೇನು ಮಾಡಲಿ?” ಎಂದು ಜನರನ್ನು ಕೇಳಿದನು.</verse>
				<verse number="13">ಅದಕ್ಕೆ ಅವರು, “ಅವನನ್ನು ಶಿಲುಬೆಗೇರಿಸಿ,” ಎಂದು ಬೊಬ್ಬೆಹಾಕಿದರು.</verse>
				<verse number="14">“ಏಕೆ ಇವನೇನು ಮಾಡಿದ್ದಾನೆ?” ಎಂದು ಪಿಲಾತನು ಮತ್ತೆ ಅವರನ್ನು ಪ್ರಶ್ನಿಸಲು ಅವರು, “ಅವನನ್ನು ಶಿಲುಬೆಗೇರಿಸಿ, ಶಿಲುಬೆಗೇರಿಸಿ,” ಎಂದು ಇನ್ನೂ ಹೆಚ್ಚಾಗಿ ಆರ್ಭಟಿಸಿದರು.</verse>
				<verse number="15">ಪಿಲಾತನು ಜನಸಮೂಹವನ್ನು ಮೆಚ್ಚಿಸುವ ಸಲುವಾಗಿ ಬರಬ್ಬನನ್ನು ಬಿಡುಗಡೆ ಮಾಡಿದನು. ಯೇಸುವನ್ನು ಕೊರಡೆಗಳಿಂದ ಹೊಡೆಸಿ, ಶಿಲುಬೆಗೇರಿಸುವುದಕ್ಕೆ ಒಪ್ಪಿಸಿಬಿಟ್ಟನು.</verse>
				<verse number="16">ಅನಂತರ ಸೈನಿಕರು ಯೇಸುಸ್ವಾಮಿಯನ್ನು ರಾಜಭವನದ ಅಂಗಣದೊಳಕ್ಕೆ ಕೊಂಡೊಯ್ದು, ತಮ್ಮ ಪಡೆಯೆಲ್ಲವನ್ನೂ ಒಟ್ಟಿಗೆ ಕರೆದರು.</verse>
				<verse number="17">ಯೇಸುವಿಗೆ ನಸುಗೆಂಪು ಮೇಲಂಗಿಯನ್ನು ಹೊದಿಸಿದರು. ಮುಳ್ಳಿನಿಂದ ಒಂದು ಕಿರೀಟವನ್ನು ಹೆಣೆದು, ಅವರ ತಲೆಯ ಮೇಲೆ ಇರಿಸಿದರು.</verse>
				<verse number="18">ತರುವಾಯ, “ಯೆಹೂದ್ಯರ ಅರಸನಿಗೆ ಜಯವಾಗಲಿ,” ಎಂದು ನಾಟಕೀಯವಾಗಿ ವಂದಿಸಿದರು.</verse>
				<verse number="19">ಕೋಲಿನಿಂದ ಅವರ ತಲೆಯ ಮೇಲೆ ಹೊಡೆದು, ಉಗುಳಿ, ಮೊಣಕಾಲೂರಿ ಗೌರವಿಸುವಂತೆ ನಟಿಸಿದರು.</verse>
				<verse number="20">ಹೀಗೆ ಯೇಸುವನ್ನು ಪರಿಹಾಸ್ಯಮಾಡಿದ ಬಳಿಕ, ಆ ನಸುಗೆಂಪು ಮೇಲಂಗಿಯನ್ನು ತೆಗೆದುಹಾಕಿ, ಅವರ ಬಟ್ಟೆಯನ್ನೇ ಮತ್ತೆ ತೊಡಿಸಿದರು. ಬಳಿಕ ಶಿಲುಬೆಗೆ ಏರಿಸುವುದಕ್ಕಾಗಿ ಅವರನ್ನು ಕರೆದುಕೊಂಡುಹೋದರು.</verse>
				<verse number="21">ಆಗ ಸಿರೇನ್ ಪಟ್ಟಣದ ಸಿಮೋನ ಎಂಬವನು ಹಳ್ಳಿಯ ಕಡೆಯಿಂದ ಆ ಮಾರ್ಗವಾಗಿ ಬರುತ್ತಿದ್ದನು. ಈತನು ಅಲೆಕ್ಸಾಂಡರ್ ಹಾಗೂ ರೂಫ ಎಂಬವರ ತಂದೆ. ಯೇಸುಸ್ವಾಮಿಯ ಶಿಲುಬೆಯನ್ನು ಹೊರುವಂತೆ ಸೈನಿಕರು ಅವನನ್ನು ಬಲವಂತಮಾಡಿದರು.</verse>
				<verse number="22">ಬಳಿಕ ಯೇಸುವನ್ನು ಗೊಲ್ಗೊಥ ಎಂಬ ಸ್ಥಳಕ್ಕೆ ಕರೆದುಕೊಂಡು ಬಂದರು. ಗೊಲ್ಗೊಥ ಎಂದರೆ ‘ಕಪಾಲ ಸ್ಥಳ’ ಎಂದು ಅರ್ಥ.</verse>
				<verse number="23">ಅಲ್ಲಿ ರಕ್ತಬೋಳ ಮಿಶ್ರಿತ ದ್ರಾಕ್ಷಾರಸವನ್ನು ಯೇಸುವಿಗೆ ಕೊಟ್ಟರು. ಆದರೆ ಅದನ್ನು ಅವರು ಕುಡಿಯಲಿಲ್ಲ.</verse>
				<verse number="24">ಕೊನೆಗೆ ಅವರನ್ನು ಶಿಲುಬೆಗೆ ಏರಿಸಿದರು. ಅವರ ಬಟ್ಟೆಗಳನ್ನು ಯಾವುಯಾವುದು ಯಾರು ಯಾರಿಗೆ ಸಿಗಬೇಕೆಂದು ತಿಳಿಯಲು ಚೀಟುಹಾಕಿ ತಮ್ಮತಮ್ಮೊಳಗೆ ಹಂಚಿಕೊಂಡರು.</verse>
				<verse number="25">ಯೇಸುವನ್ನು ಶಿಲುಬೆಗೇರಿಸಿದಾಗ, ಬೆಳಿಗ್ಗೆ ಸುಮಾರು ಒಂಭತ್ತು ಗಂಟೆಯಾಗಿತ್ತು.</verse>
				<verse number="26">ಅವರ ಮೇಲೆ ಹೊರಿಸಿದ್ದ ದೋಷಾರೋಪಣೆಯನ್ನು, ‘ಈತ ಯೆಹೂದ್ಯರ ಅರಸ’ ಎಂದು ಬರೆಯಲಾಗಿತ್ತು.</verse>
				<verse number="27">ಅಲ್ಲದೆ ಯೇಸುವಿನ ಬಲಗಡೆ ಒಬ್ಬನು, ಎಡಗಡೆ ಒಬ್ಬನು, ಹೀಗೆ ಇಬ್ಬರು ಕಳ್ಳರನ್ನು ಅವರ ಸಂಗಡ ಶಿಲುಬೆಗೇರಿಸಿದರು.</verse>
				<verse number="28">(ಹೀಗೆ ‘ಅವರನ್ನು ದ್ರೋಹಿಗಳ ಸಾಲಿನಲ್ಲಿ ಸೇರಿಸಿದರು,’ ಎಂಬ ಪವಿತ್ರಗ್ರಂಥದ ವಾಕ್ಯವು ನೆರವೇರಿತು).</verse>
				<verse number="29">ಪಕ್ಕದಲ್ಲಿ ಹಾದುಹೋಗುತ್ತಿದ್ದ ಜನರು ತಲೆಯಾಡಿಸುತ್ತಾ, “ಆಹಾ, ಮಹಾದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಅದನ್ನು ಮತ್ತೆ ಕಟ್ಟಬಲ್ಲವನೇ,</verse>
				<verse number="30">ಶಿಲುಬೆಯಿಂದ ಇಳಿದುಬಂದು ನಿನ್ನನ್ನು ನೀನೇ ಈಗ ರಕ್ಷಿಸಿಕೋ!” ಎಂದು ಯೇಸುವನ್ನು ಮೂದಲಿಸಿದರು.</verse>
				<verse number="31">ಅದೇ ಪ್ರಕಾರ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಸೇರಿ ಅವರನ್ನು ಅಪಹಾಸ್ಯಮಾಡುತ್ತಾ, “ಇವನು ಇತರರನ್ನು ರಕ್ಷಿಸಿದ, ಆದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲು ಇವನಿಂದಾಗದು;</verse>
				<verse number="32">ಇಸ್ರಯೇಲರ ಅರಸನಾದ ಈ ಕ್ರಿಸ್ತನು ಶಿಲುಬೆಯಿಂದ ಇಳಿದುಬರಲಿ; ಆಗ ನೋಡಿ ನಂಬುತ್ತೇವೆ,” ಎಂದು ಪರಸ್ಪರ ಮಾತನಾಡಿಕೊಂಡರು. ಯೇಸುವಿನೊಡನೆ ಶಿಲುಬೆಗೇರಿಸಲಾಗಿದ್ದವರು ಸಹ ಅವರನ್ನು ಹಂಗಿಸುತ್ತಿದ್ದರು.</verse>
				<verse number="33">ಆಗ ನಡುಮಧ್ಯಾಹ್ನ. ಆ ಹೊತ್ತಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.</verse>
				<verse number="34">ಮೂರನೆಯ ಗಂಟೆಯ ಸಮಯದಲ್ಲಿ, ಯೇಸುಸ್ವಾಮಿ: “ಎಲೋಹಿ, ಎಲೋಹಿ, ಲಮಾ ಸಬಕ್ತಾನಿ?” ಎಂದರೆ, “ನನ್ನ ದೇವರೇ, ನನ್ನ ದೇವರೇ, ನನ್ನನ್ನೇಕೆ ಕೈಬಿಟ್ಟಿದ್ದೀರಿ?” ಎಂದು ಗಟ್ಟಿಯಾಗಿ ಕೂಗಿಕೊಂಡರು.</verse>
				<verse number="35">ಅಲ್ಲಿ ನಿಂತಿದ್ದವರಲ್ಲಿ ಕೆಲವರು ಇದನ್ನು ಕೇಳಿ, “ಇಗೋ, ಇವನು ಎಲೀಯನನ್ನು ಕರೆಯುತ್ತಿದ್ದಾನೆ!” ಎಂದರು.</verse>
				<verse number="36">ಆಗ ಅವರಲ್ಲೊಬ್ಬನು ಓಡಿಹೋಗಿ, ಸ್ಪಂಜನ್ನು ಹುಳಿರಸದಲ್ಲಿ ತೋಯಿಸಿ, ಅದನ್ನು ಒಂದು ಕೋಲಿನ ತುದಿಗೆ ಸಿಕ್ಕಿಸಿ, ಯೇಸುವಿಗೆ ಕುಡಿಯಲು ಕೊಡುತ್ತಾ, “ತಾಳಿ, ಇವನನ್ನು ಶಿಲುಬೆಯಿಂದ ಬಿಡುಗಡೆಮಾಡಿ ಇಳಿಸುವುದಕ್ಕೆ ಎಲೀಯನು ಬರುವನೋ, ನೋಡೋಣ,” ಎಂದನು.</verse>
				<verse number="37">ಯೇಸುವಾದರೋ ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.</verse>
				<verse number="38">ಆಗ ಮಹಾದೇವಾಲಯದ ತೆರೆ ಮೇಲಿನಿಂದ ಕೆಳಗಿನವರೆಗೂ ಇಬ್ಭಾಗವಾಗಿ ಸೀಳಿಹೋಯಿತು.</verse>
				<verse number="39">ಯೇಸು ಹೀಗೆ ಪ್ರಾಣಬಿಟ್ಟದ್ದನ್ನು ಎದುರುನಿಂತು ನೋಡುತ್ತಿದ್ದ ಶತಾಧಿಪತಿ, “ಸತ್ಯವಾಗಿಯೂ ಈ ಮನುಷ್ಯ ದೇವರ ಪುತ್ರ!” ಎಂದನು.</verse>
				<verse number="40">ಇದನ್ನೆಲ್ಲಾ ದೂರದಿಂದ ನೋಡುತ್ತಿದ್ದ ಕೆಲವು ಮಹಿಳೆಯರಲ್ಲಿ ಮಗ್ದಲದ ಮರಿಯಳು, ಚಿಕ್ಕ ಯಕೋಬ ಮತ್ತು ಯೋಸೆಯ ತಾಯಿ ಮರಿಯಳು ಹಾಗೂ ಸಲೋಮೆ ಇದ್ದರು.</verse>
				<verse number="41">ಇವರು, ಯೇಸು ಗಲಿಲೇಯದಲ್ಲಿ ಇದ್ದಾಗ ಅವರನ್ನು ಹಿಂಬಾಲಿಸಿ, ಉಪಚಾರ ಮಾಡಿದ್ದರು. ಯೇಸುವಿನ ಸಂಗಡ ಜೆರುಸಲೇಮಿಗೆ ಬಂದಿದ್ದ ಇನ್ನೂ ಅನೇಕ ಮಹಿಳೆಯರು ಅಲ್ಲಿದ್ದರು.</verse>
				<verse number="42">ಅಷ್ಟರಲ್ಲೇ ಸಂಜೆಯಾಗಿತ್ತು. ಸಬ್ಬತ್ತಿನ ಹಿಂದಿನ ದಿನವಾಗಿದ್ದ ಅಂದು ‘ಸಿದ್ಧತೆ’ಯ ದಿನ ಆಗಿತ್ತು. ಆದುದರಿಂದ ಅರಿಮತಾಯ ಊರಿನ ಜೋಸೆಫ್ ಎಂಬಾತನು ಧೈರ್ಯತಂದುಕೊಂಡು, ಪಿಲಾತನ ಸಾನ್ನಿಧ್ಯಕ್ಕೆ ಹೋಗಿ, ಯೇಸುಸ್ವಾಮಿಯ ಪಾರ್ಥಿವ ಶರೀರವನ್ನು</verse>
				<verse number="43">ತನಗೆ ಕೊಡಿಸಬೇಕೆಂದು ಪಿಲಾತನನ್ನು ಕೇಳಿಕೊಂಡನು. ದೇವರ ಸಾಮ್ರಾಜ್ಯದ ಆಗಮನವನ್ನು ನಿರೀಕ್ಷಿಸುತ್ತಿದ್ದ ಈತನು ಯೆಹೂದ್ಯರ ನ್ಯಾಯಸಭೆಯ ಸನ್ಮಾನಿತ ಸದಸ್ಯನಾಗಿದ್ದನು.</verse>
				<verse number="44">ಯೇಸು ಇಷ್ಟುಬೇಗನೆ ಸತ್ತಿದ್ದಾರೆಂದು ಕೇಳಿ ಪಿಲಾತನಿಗೆ ಆಶ್ಚರ್ಯವಾಯಿತು. ಅವನು ಶತಾಧಿಪತಿಯನ್ನು ಕರೆಯಿಸಿ, “ಯೇಸು ಈಗಾಗಲೇ ಮೃತನಾದನೋ?” ಎಂದು ವಿಚಾರಿಸಿದನು.</verse>
				<verse number="45">ಯೇಸು ಸತ್ತಿದ್ದಾರೆಂದು ಅವನಿಂದ ತಿಳಿದುಕೊಂಡು ಪಾರ್ಥಿವ ಶರೀರವನ್ನು ಜೋಸೆಫನಿಗೆ ಕೊಡಿಸಿದನು.</verse>
				<verse number="46">ಜೋಸೆಫನು ನಾರುಮಡಿ ವಸ್ತ್ರವನ್ನು ಕೊಂಡುಕೊಂಡು ಬಂದು, ಯೇಸುವನ್ನು ಶಿಲುಬೆಯಿಂದ ಇಳಿಸಿ, ಆ ವಸ್ತ್ರದಿಂದ ಸುತ್ತಿದನು. ಅನಂತರ ಬಂಡೆಯಲ್ಲಿ ಕೊರೆದಿದ್ದ ಸಮಾಧಿಯಲ್ಲಿ ಅದನ್ನಿರಿಸಿ, ಸಮಾಧಿಯ ದ್ವಾರಕ್ಕೆ ದೊಡ್ಡ ಕಲ್ಲನ್ನು ಉರುಳಿಸಿ ಮುಚ್ಚಿದನು.</verse>
				<verse number="47">ಮಗ್ದಲದ ಮರಿಯಳು ಮತ್ತು ಯೋಸೆಯ ತಾಯಿ ಮರಿಯಳು ಯೇಸುವಿನ ಪಾರ್ಥಿವ ಶರೀರವನ್ನು ಸಮಾಧಿಮಾಡಿದ್ದ ಸ್ಥಳವನ್ನು ಗುರುತಿಸಿಕೊಂಡರು.</verse>
			</chapter>
			<chapter number="16">
				<verse number="1">ಸಬ್ಬತ್‍ದಿನ ಕಳೆದದ್ದೇ ಮಗ್ದಲದ ಮರಿಯಳು, ಯಕೋಬನ ತಾಯಿ ಮರಿಯಳು ಮತ್ತು ಸಲೋಮೆ ಯೇಸುವಿನ ಪಾರ್ಥಿವ ಶರೀರಕ್ಕೆ ಲೇಪಿಸಲೆಂದು ಸುಗಂಧದ್ರವ್ಯಗಳನ್ನು ಕೊಂಡುಕೊಂಡರು.</verse>
				<verse number="2">ಭಾನುವಾರ ಮುಂಜಾನೆ ಬೇಗನೆ ಹೊರಟು ಸೂರ್ಯೋದಯ ಸಮಯಕ್ಕೆ ಸಮಾಧಿಯನ್ನು ತಲುಪಿದರು.</verse>
				<verse number="3">“ಸಮಾಧಿಯ ದ್ವಾರಕ್ಕೆ ಮುಚ್ಚಿರುವ ಕಲ್ಲನ್ನು ನಮಗೆ ಉರುಳಿಸಿಕೊಡುವವರು ಯಾರು?” ಎಂದು ಅವರು ತಮ್ಮತಮ್ಮಲ್ಲಿ ಮಾತನಾಡಿಕೊಳ್ಳುತ್ತಿದ್ದರು. ಏಕೆಂದರೆ, ಆ ಕಲ್ಲು ಬಹಳ ದೊಡ್ಡದಾಗಿತ್ತು.</verse>
				<verse number="4">ತಲೆಯೆತ್ತಿ ನೋಡಿದಾಗ, ಕಲ್ಲು ಪಕ್ಕದಲ್ಲಿ ಬಿದ್ದಿರುವುದನ್ನು ಕಂಡರು.</verse>
				<verse number="5">ಸಮಾಧಿಯೊಳಕ್ಕೆ ಪ್ರವೇಶಿಸಿ ನೋಡುವಾಗ, ಬಿಳಿಯ ಬಟ್ಟೆ ಧರಿಸಿದ್ದ ಯುವಕನೊಬ್ಬನು ಅಲ್ಲಿ ಬಲಗಡೆ ಕುಳಿತಿರುವುದನ್ನು ಕಂಡು, ಅವರು ಬೆಚ್ಚಿಬಿದ್ದರು.</verse>
				<verse number="6">ಆತನು, “ಭಯಪಡಬೇಡಿ, ಶಿಲುಬೆಗೇರಿಸಿದ್ದ ನಜರೇತಿನ ಯೇಸುವನ್ನು ನೀವು ಹುಡುಕುತ್ತಾ ಇದ್ದೀರೆಂದು ನನಗೆ ತಿಳಿದಿದೆ. ಅವರು ಇಲ್ಲಿಲ್ಲ. ಪುನರುತ್ಥಾನ ಹೊಂದಿದ್ದಾರೆ. ನೋಡಿ, ಇದೇ ಅವರನ್ನು ಇಟ್ಟ ಸ್ಥಳ.</verse>
				<verse number="7">ಈಗ ನೀವು ಹೋಗಿ ಪೇತ್ರನಿಗೂ ಮಿಕ್ಕ ಶಿಷ್ಯರಿಗೂ, ‘ಯೇಸು ನಿಮಗೆ ಮೊದಲೇ ತಿಳಿಸಿದಂತೆ, ನಿಮಗಿಂತ ಮುಂಚಿತವಾಗಿ ಗಲಿಲೇಯಕ್ಕೆ ಹೋಗುವರು. ಅವರನ್ನು ಅಲ್ಲೇ ಕಾಣುವಿರಿ,’ ಎಂದು ತಿಳಿಸಿರಿ,” ಎಂದನು.</verse>
				<verse number="8">ಅವರು ವಿಸ್ಮಯಗೊಂಡು ಭಯದಿಂದ ನಡುಗುತ್ತಾ, ಸಮಾಧಿಯಿಂದ ಹೊರಕ್ಕೆ ಬಂದು, ಅಲ್ಲಿಂದ ಓಡಿಹೋದರು. ಭಯದ ನಿಮಿತ್ತ ಅವರು ಯಾರಿಗೂ ಏನನ್ನೂ ಹೇಳಲಿಲ್ಲ.</verse>
				<verse number="9">ಭಾನುವಾರ ಮುಂಜಾನೆ ಪುನರುತ್ಥಾನ ಹೊಂದಿದ ಯೇಸುಸ್ವಾಮಿ, ಮೊತ್ತಮೊದಲು ಮಗ್ದಲದ ಮರಿಯಳಿಗೆ ಕಾಣಿಸಿಕೊಂಡರು. ಅವರು ಏಳು ದೆವ್ವಗಳನ್ನು ಹೊರಗಟ್ಟಿದ್ದು ಈಕೆಯಿಂದಲೇ.</verse>
				<verse number="10">ಈಕೆ ಹೋಗಿ ತಾನು ಕಂಡದ್ದನ್ನು ಯೇಸುವಿನ ಸಂಗಡಿಗರಿಗೆ ತಿಳಿಸಿದಳು. ಅವರಾದರೋ ಇನ್ನೂ ಶೋಕಭರಿತರಾಗಿ ಅಳುತ್ತಾ ಕುಳಿತಿದ್ದರು.</verse>
				<verse number="11">ಆದರೆ ಯೇಸು ಜೀವಂತರಾಗಿದ್ದಾರೆ ಮತ್ತು ಆಕೆಗೆ ಕಾಣಿಸಿಕೊಂಡಿದ್ದಾರೆ ಎಂಬ ವಾರ್ತೆಯನ್ನು ಕೇಳಿದಾಗ ಅವರು ಅದನ್ನು ನಂಬಲೇ ಇಲ್ಲ.</verse>
				<verse number="12">ತರುವಾಯ, ಹಳ್ಳಿಯೊಂದಕ್ಕೆ ಪ್ರಯಾಣ ಮಾಡುತ್ತಿದ್ದ ತಮ್ಮ ಇಬ್ಬರು ಶಿಷ್ಯರಿಗೆ ಯೇಸುಸ್ವಾಮಿ ಇನ್ನೊಂದು ರೀತಿಯಲ್ಲಿ ಕಾಣಿಸಿಕೊಂಡರು.</verse>
				<verse number="13">ಇವರಿಬ್ಬರೂ ಹಿಂದಿರುಗಿ ಬಂದು, ಮಿಕ್ಕ ಶಿಷ್ಯರಿಗೆ ಇದನ್ನು ತಿಳಿಸಿದರು. ಆದರೆ ಅದನ್ನು ಅವರು ನಂಬದೆಹೋದರು.</verse>
				<verse number="14">ಅನಂತರ, ಹನ್ನೊಂದು ಮಂದಿ ಶಿಷ್ಯರು ಊಟಮಾಡುತ್ತಿದ್ದಾಗ ಯೇಸುಸ್ವಾಮಿ ಪ್ರತ್ಯಕ್ಷರಾದರು. ತಾವು ಪುನರುತ್ಥಾನ ಹೊಂದಿದ ಮೇಲೆ, ತಮ್ಮನ್ನು ಕಂಡವರ ಮಾತನ್ನು ಅವರು ನಂಬದಿದ್ದ ಕಾರಣ ಅವರ ಅವಿಶ್ವಾಸವನ್ನೂ ಹೃದಯ ಕಾಠಿಣ್ಯವನ್ನೂ ಯೇಸು ಖಂಡಿಸಿದರು.</verse>
				<verse number="15">ಬಳಿಕ ಅವರಿಗೆ, “ನೀವು ವಿಶ್ವದ ಎಲ್ಲೆಡೆಗಳಿಗೂ ಹೋಗಿ, ಜಗತ್ತಿಗೆಲ್ಲಾ ಶುಭಸಂದೇಶವನ್ನು ಪ್ರಬೋಧಿಸಿರಿ.</verse>
				<verse number="16">ವಿಶ್ವಾಸವಿಟ್ಟು ದೀಕ್ಷಾಸ್ನಾನ ಪಡೆಯುವವನು ಜೀವೋದ್ಧಾರ ಹೊಂದುವನು. ವಿಶ್ವಾಸಿಸದೆ ಇರುವವನು ಖಂಡನೆಗೆ ಗುರಿಯಾಗುವನು.</verse>
				<verse number="17">ವಿಶ್ವಾಸಿಸುವುದರಿಂದ ಈ ಅದ್ಭುತಕಾರ್ಯಗಳು ಆಗುವುವು. ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು; ಹೊಸ ಭಾಷೆಗಳಲ್ಲಿ ಮಾತಾಡುವರು;</verse>
				<verse number="18">ಕೈಗಳಿಂದ ಸರ್ಪಗಳನ್ನು ಎತ್ತಿದರೂ ವಿಷಪದಾರ್ಥಗಳನ್ನೇನಾದರು ಕುಡಿದರೂ ಯಾವ ಹಾನಿಯೂ ಅವರಿಗಾಗದು. ಅವರು ರೋಗಿಗಳ ಮೇಲೆ ಕೈ ಇಟ್ಟರೆ ರೋಗಿಗಳು ಗುಣಹೊಂದುವರು,” ಎಂದರು.</verse>
				<verse number="19">ಯೇಸುಸ್ವಾಮಿ ಶಿಷ್ಯರೊಡನೆ ಮಾತನಾಡಿದ ಮೇಲೆ ಸ್ವರ್ಗಾರೋಹಣವಾಗಿ ದೇವರ ಬಲಪಾರ್ಶ್ವದಲ್ಲಿ ಆಸೀನರಾದರು.</verse>
				<verse number="20">ಇತ್ತ ಶಿಷ್ಯರು ಹೊರಟುಹೋಗಿ, ಎಲ್ಲೆಡೆಗಳಲ್ಲಿಯೂ ಶುಭಸಂದೇಶವನ್ನು ಬೋಧಿಸತೊಡಗಿದರು. ಪ್ರಭು ಯೇಸು ಅವರೊಂದಿಗೆ ಕಾರ್ಯಸಾಧಿಸುತ್ತಾ, ಮಹತ್ಕಾರ್ಯಗಳಿಂದ ಶುಭಸಂದೇಶವನ್ನು ಸಮರ್ಥಿಸುತ್ತಾ ಇದ್ದರು. (ಆ ಮಹಿಳೆಯರು ಹೋಗಿ ತಾವು ಕೇಳಿದ್ದೆಲ್ಲವನ್ನೂ ಪೇತ್ರನಿಗೂ ಆತನ ಸಂಗಡಿಗರಿಗೂ ಸಂಕ್ಷಿಪ್ತವಾಗಿ ತಿಳಿಸಿದರು. ಅನಂತರ ಯೇಸುಸ್ವಾಮಿ ಸ್ವತಃ ತಮ್ಮ ಶುಭಸಂದೇಶವನ್ನು ಶಿಷ್ಯರ ಮೂಲಕ ಜಗತ್ತಿನೆಲ್ಲೆಡೆ ಹರಡುವಂತೆ ಮಾಡಿದರು. ಶಾಶ್ವತ ಜೀವೋದ್ಧಾರವನ್ನೀಯುವ ಈ ಶುಭಸಂದೇಶವು ಪವಿತ್ರ ಹಾಗೂ ಚಿರಂತನವಾದುದು).</verse>
			</chapter>
		</book>
		<book number="42">
			<chapter number="1">
				<verse number="1">ಸನ್ಮಾನ್ಯ ಥೆಯೊಫಿಲನೇ, ನಮ್ಮ ಮಧ್ಯೆ ನೆರವೇರಿರುವ ಘಟನೆಗಳ ವರದಿಯನ್ನು ಬರೆದಿಡಲು ಹಲವರು ಪ್ರಯತ್ನಿಸಿದ್ದಾರೆ.</verse>
				<verse number="2">ಪ್ರಾರಂಭದಿಂದ ಕಣ್ಣಾರೆ ಕಂಡು ಶುಭಸಂದೇಶವನ್ನು ಸಾರಿದವರಿಂದಲೇ ನಾವು ಕೇಳಿದ ಘಟನೆಗಳವು.</verse>
				<verse number="3">ನಾನು ಆಮೂಲಾಗ್ರವಾಗಿ ವಿಚಾರಿಸಿದ ಅವೆಲ್ಲವನ್ನು ನಿನಗೋಸ್ಕರ ಕ್ರಮಬದ್ಧವಾಗಿ ಬರೆಯುವುದು ಉಚಿತವೆಂದು ನನಗೂ ತೋರಿತು.</verse>
				<verse number="4">ನಿನಗೆ ಉಪದೇಶಿಸಲಾಗಿರುವ ವಿಷಯಗಳು ಸತ್ಯವಾದುವೆಂದು ಇದರಿಂದ ನಿನಗೆ ಮನದಟ್ಟಾಗುವುದು.</verse>
				<verse number="5">ಜುದೇಯ ಪ್ರಾಂತ್ಯದ ಅರಸನಾಗಿದ್ದ ಹೆರೋದನ ಕಾಲದಲ್ಲಿ ಅಬೀಯನ ವರ್ಗಕ್ಕೆ ಸೇರಿದ ಜಕರೀಯನೆಂಬ ಒಬ್ಬ ಯಾಜಕನಿದ್ದನು. ಇವನ ಪತ್ನಿಯ ಹೆಸರು ಎಲಿಜಬೇತ್‍. ಇವಳೂ ಆರೋನನ ಯಾಜಕವಂಶಕ್ಕೆ ಸೇರಿದವಳು.</verse>
				<verse number="6">ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.</verse>
				<verse number="7">ಎಲಿಜಬೇತಳು ಬಂಜೆ ಆದುದರಿಂದ ಅವರಿಗೆ ಮಕ್ಕಳಿರಲಿಲ್ಲ. ಅಲ್ಲದೆ ಅವರಿಬ್ಬರೂ ಮುದುಕರಾಗಿದ್ದರು.</verse>
				<verse number="8">ಒಮ್ಮೆ ತನ್ನ ವರ್ಗದ ಸರದಿ ಬಂದಾಗ ಜಕರೀಯನು ದೇವರ ಸನ್ನಿಧಿಯಲ್ಲಿ ಯಾಜಕ ವಿಧಿಯನ್ನು ನೆರವೇರಿಸುತ್ತಿದ್ದನು.</verse>
				<verse number="9">ಮಹಾದೇವಾಲಯದ ಗರ್ಭಗುಡಿಯನ್ನು ಪ್ರವೇಶಿಸಿ ಧೂಪಾರತಿಯನ್ನು ಅರ್ಪಿಸುವ ಸರದಿಗೆ, ಯಾಜಕರ ಸಂಪ್ರದಾಯದ ಪ್ರಕಾರ, ಚೀಟು ಹಾಕಿದಾಗ ಅದು ಜಕರೀಯನ ಪಾಲಿಗೆ ಬಂದಿತು. ಅಂತೆಯೇ, ಅವನು ಧೂಪಾರತಿಯನ್ನು ಅರ್ಪಿಸುತ್ತಿದ್ದಾಗ</verse>
				<verse number="10">ಭಕ್ತಸಮೂಹವು ಹೊರಗೆನಿಂತು ಪ್ರಾರ್ಥನೆ ಮಾಡುತ್ತಿತ್ತು.</verse>
				<verse number="11">ಆಗ ಧೂಪಪೀಠದ ಬಲಗಡೆ ಅವನಿಗೆ ದೇವದೂತನೊಬ್ಬನು ಪ್ರತ್ಯಕ್ಷನಾದನು.</verse>
				<verse number="12">ಅವನನ್ನು ಕಾಣುತ್ತಲೇ ತತ್ತರಗೊಂಡ ಜಕರೀಯನು ಭಯಭ್ರಾಂತನಾದನು.</verse>
				<verse number="13">ದೂತನು ಅವನಿಗೆ, “ಜಕರೀಯಾ, ಭಯಪಡಬೇಡ! ನಿನ್ನ ಪ್ರಾರ್ಥನೆಯನ್ನು ದೇವರು ಆಲಿಸಿದ್ದಾರೆ. ನಿನ್ನ ಪತ್ನಿ ಎಲಿಜಬೇತಳಲ್ಲಿ ನಿನಗೆ ಒಂದು ಗಂಡುಮಗು ಹುಟ್ಟುವುದು. ನೀನು ಅವನಿಗೆ ‘ಯೊವಾನ್ನ’ ಎಂದು ನಾಮಕರಣ ಮಾಡಬೇಕು.</verse>
				<verse number="14">ಆ ಮಗುವಿನ ಜನನವು ನಿಮಗೆ ಹರ್ಷಾನಂದವನ್ನು ಉಂಟುಮಾಡುವುದು; ಬಹುಜನಕ್ಕೆ ಸಂತಸವನ್ನು ತರುವುದು.</verse>
				<verse number="15">ಸರ್ವೇಶ್ವರನ ದೃಷ್ಟಿಯಲ್ಲಿ ಅವನು ಮಹಾತ್ಮನಾಗುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಸೇವಿಸನು; ತಾಯಿಯ ಉದರದಿಂದಲೇ ಪವಿತ್ರಾತ್ಮಭರಿತನಾಗುವನು.</verse>
				<verse number="16">ಇಸ್ರಯೇಲರಲ್ಲಿ ಅನೇಕರನ್ನು ಅವರ ದೇವರಾದ ಸರ್ವೇಶ್ವರನ ಕಡೆಗೆ ಮರಳಿ ತಿರುಗಿಸುವನು.</verse>
				<verse number="17">ಎಲೀಯನಂತೆ ಶಕ್ತಿಪ್ರಭಾವಗಳಿಂದ ಕೂಡಿದವನಾಗಿ ಪ್ರಭುವಿನ ಮುಂದೂತನಾಗುವನು. ತಂದೆ-ಮಕ್ಕಳನ್ನು ಪುನಃ ಒಂದಾಗಿಸುವನು. ಸತ್ಪುರುಷರ ಸನ್ಮಾರ್ಗಕ್ಕೆ ಅವಿಧೇಯರು ಹಿಂದಿರುಗುವಂತೆ ಮಾಡುವನು. ಹೀಗಾಗಿ ಪ್ರಭುವಿಗೆ ಯೋಗ್ಯಪ್ರಜೆಯನ್ನು ಸಿದ್ಧಗೊಳಿಸುವನು,” ಎಂದನು.</verse>
				<verse number="18">ಅದಕ್ಕೆ ಜಕರೀಯನು, “ಈ ಮಾತು ನಿಜವಾಗುವುದೆಂದು ನಾನು ತಿಳಿಯುವುದಾದರೂ ಹೇಗೆ? ನಾನೋ ಮುದುಕ; ನನ್ನ ಪತ್ನಿಗೂ ಮುಪ್ಪು,” ಎಂದನು.</verse>
				<verse number="19">ಆಗ ದೇವದೂತನು, “ನಾನು ದೇವರ ಸನ್ನಿಧಿಯಲ್ಲಿ ಸೇವೆಮಾಡುವ ಗಬ್ರಿಯೇಲನು; ಈ ಶುಭಸಮಾಚಾರವನ್ನು ನಿನಗೆ ತಿಳಿಸುವುದಕ್ಕಾಗಿ ದೇವರ ಅಪ್ಪಣೆಯ ಪ್ರಕಾರ ಬಂದವನು.</verse>
				<verse number="20">ನಾನು ತಿಳಿಸಿದ ಸಂದೇಶವು ಸಕಾಲದಲ್ಲಿ ನೆರವೇರುವುದು. ಆದರೆ ನೀನು ಅದನ್ನು ನಂಬದೆಹೋದ ಕಾರಣ ಅದೆಲ್ಲಾ ಈಡೇರುವ ತನಕ ಮಾತನಾಡಲಾಗದೆ ಮೂಕನಾಗಿರುವೆ,” ಎಂದನು.</verse>
				<verse number="21">ಇತ್ತ ಭಕ್ತಜನರು ಜಕರೀಯನಿಗಾಗಿ ಎದುರು ನೋಡುತ್ತಾ ದೇವಾಲಯದಲ್ಲಿ ಅವನು ಇಷ್ಟು ತಡಮಾಡಲು ಕಾರಣವೇನಿರಬಹುದೆಂದು ಆಶ್ಚರ್ಯಪಡುತ್ತಿದ್ದರು.</verse>
				<verse number="22">ಅಷ್ಟರಲ್ಲಿ ಜಕರೀಯನು ಹೊರಗೆ ಬಂದು ಮಾತನಾಡಲೆತ್ನಿಸಿದರೂ ಅವನ ಬಾಯಿಂದ ಮಾತೇ ಹೊರಡಲಿಲ್ಲ. ಬರೀ ಕೈಸನ್ನೆಮಾಡುತ್ತಿದ್ದ ಅವನಿಗೆ ದೇವಾಲಯದಲ್ಲಿ ಏನೋ ದಿವ್ಯದರ್ಶನ ಆಗಿರಬೇಕೆಂದು ಜನರು ಅರಿತುಕೊಂಡರು. ಅಂದಿನಿಂದ ಅವನು ಮೂಕನಾಗಿಯೇ ಇದ್ದನು.</verse>
				<verse number="23">ತನ್ನ ಯಾಜಕ ಸೇವಾಸರದಿಯು ಮುಗಿದ ನಂತರ ಜಕರೀಯನು ಮನೆಗೆ ಹಿಂದಿರುಗಿ ಹೋದನು.</verse>
				<verse number="24">ಕೆಲವು ದಿನಗಳಾದ ಬಳಿಕ ಅವನ ಪತ್ನಿ ಎಲಿಜಬೇತಳು ಗರ್ಭಿಣಿಯಾಗಿ, ಐದು ತಿಂಗಳು ಮನೆಯಲ್ಲಿ ಮರೆಯಾಗಿದ್ದಳು. ‘ಕಟ್ಟಕಡೆಗೆ ಸರ್ವೇಶ್ವರ ನನಗೆ ಕರುಣೆ ತೋರಿದ್ದಾರೆ; ಜನರ ನಡುವೆ ನನಗಿದ್ದ ಅವಮಾನವನ್ನು ತೊಲಗಿಸಿದ್ದಾರೆ,’ ಎಂದುಕೊಳ್ಳುತ್ತಿದ್ದಳು.</verse>
				<verse number="25"></verse>
				<verse number="26">ಎಲಿಜಬೇತಳು ಗರ್ಭಿಣಿಯಾದ ಆರನೇ ತಿಂಗಳಲ್ಲಿ, ದೇವರು ಗಬ್ರಿಯೇಲ್ ದೂತನನ್ನು ಗಲಿಲೇಯ ಪ್ರಾಂತ್ಯದ ನಜರೇತೆಂಬ ಊರಿನಲ್ಲಿದ್ದ ಒಬ್ಬ ಕನ್ನಿಕೆಯಲ್ಲಿಗೆ ಕಳುಹಿಸಿದರು.</verse>
				<verse number="27">ಆಕೆಗೆ ದಾವೀದರಸನ ವಂಶಜ ನಾದ ಜೋಸೆಫನೊಂದಿಗೆ ನಿಶ್ಚಿತಾರ್ಥವಾಗಿತ್ತು. ಆಕೆಯ ಹೆಸರು ಮರಿಯ.</verse>
				<verse number="28">ದೇವದೂತನು ಆಕೆಯ ಬಳಿಗೆ ಬಂದು, “ದೈವಾನುಗ್ರಹಭರಿತಳೇ, ನಿನಗೆ ಶುಭವಾಗಲಿ; ಸರ್ವೇಶ್ವರ ನಿನ್ನೊಡನೆ ಇದ್ದಾರೆ!” ಎಂದನು.</verse>
				<verse number="29">ಇದನ್ನು ಕೇಳಿದ ಮರಿಯಳು ತಬ್ಬಿಬ್ಬಾದಳು. ‘ಇದೆಂಥ ಶುಭಾಶಯ’ ಎಂದು ಅವಳು ಯೋಚಿಸತೊಡಗಿದಳು.</verse>
				<verse number="30">ದೂತನು ಆಕೆಗೆ, “ಮರಿಯಾ, ನೀನು ಅಂಜಬೇಕಾಗಿಲ್ಲ; ದೇವರ ಅನುಗ್ರಹ ನಿನಗೆ ಲಭಿಸಿದೆ;</verse>
				<verse number="31">ಇಗೋ, ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ. ಆತನಿಗೆ ‘ಯೇಸು’ ಎಂಬ ಹೆಸರಿಡಬೇಕು;</verse>
				<verse number="32">ಆತನು ಮಹಾಪುರುಷನಾಗುವನು; ಪರಾತ್ಪರ ದೇವರ ಪುತ್ರ ಎನಿಸಿಕೊಳ್ಳುವನು. ಪಿತಾಮಹ ದಾವೀದರಸನ ಸಿಂಹಾಸನವನ್ನು ಸರ್ವೇಶ್ವರನಾದ ದೇವರು ಆತನಿಗೆ ಕೊಡುವರು.</verse>
				<verse number="33">ಯಕೋಬನ ವಂಶವನ್ನು ಆತನು ಚಿರಕಾಲ ಆಳುವನು; ಆತನ ರಾಜ್ಯಭಾರಕ್ಕೆ ಅಂತ್ಯವೇ ಇರದು,” ಎಂದನು.</verse>
				<verse number="34">ಅದಕ್ಕೆ ಮರಿಯಳು, “ಇದು ಆಗುವುದಾದರೂ ಹೇಗೆ? ನನಗೆ ಯಾವ ಪುರುಷನ ಸಂಸರ್ಗವೂ ಇಲ್ಲವಲ್ಲಾ?” ಎಂದು ವಿಚಾರಿಸಿದಳು.</verse>
				<verse number="35">ದೂತನು ಪ್ರತ್ಯುತ್ತರವಾಗಿ, “ಪವಿತ್ರಾತ್ಮ ನಿನ್ನ ಮೇಲೆ ಬರುವರು; ಪರಾತ್ಪರ ದೇವರ ಶಕ್ತಿ ನಿನ್ನನ್ನು ಆವರಿಸುವುದು; ಈ ಕಾರಣದಿಂದ, ನಿನ್ನಲ್ಲಿ ಹುಟ್ಟುವ ಆ ಪವಿತ್ರ ಶಿಶು ‘ದೇವರ ಪುತ್ರ’ ಎನಿಸಿಕೊಳ್ಳುವನು.</verse>
				<verse number="36">ನಿನ್ನ ಸಂಬಂಧಿಕಳಾದ ಎಲಿಜಬೇತಳ ವಿಷಯವನ್ನು ಕೇಳು; ಆಕೆ ತನ್ನ ಮುಪ್ಪಿನಲ್ಲೂ ಒಬ್ಬ ಮಗನನ್ನು ಹೆರಲಿದ್ದಾಳೆ; ಬಂಜೆ ಎನಿಸಿಕೊಂಡಿದ್ದ ಆಕೆ ಈಗ ಆರು ತಿಂಗಳ ಗರ್ಭಿಣಿ.</verse>
				<verse number="37">ದೇವರಿಗೆ ಅಸಾಧ್ಯವಾದುದು ಯಾವುದೂ ಇಲ್ಲ,” ಎಂದನು.</verse>
				<verse number="38">ಆಗ ಮರಿಯಳು \ಇಗೋ, ನಾನು ದೇವರ ದಾಸಿ. ನೀವು ಹೇಳಿದಂತೆ ನನಗಾಗಲಿ,” ಎಂದಳು. ದೇವದೂತನು ಆಕೆಯನ್ನು ಬೀಳ್ಕೊಟ್ಟು ಅದೃಶ್ಯನಾದನು.</verse>
				<verse number="39">ಇದಾದ ಕೆಲವು ದಿನಗಳಲ್ಲೇ ಮರಿಯಳು ಪ್ರಯಾಣಹೊರಟು ಜುದೇಯದ ಗುಡ್ಡಗಾಡಿನಲ್ಲಿರುವ ಒಂದು ಊರಿಗೆ ತ್ವರೆಯಾಗಿ ಬಂದಳು.</verse>
				<verse number="40">ಅಲ್ಲಿ ಜಕರೀಯನ ಮನೆಗೆ ಹೋಗಿ ಎಲಿಜಬೇತಳನ್ನು ವಂದಿಸಿದಳು.</verse>
				<verse number="41">ಮರಿಯಳ ವಂದನೆಯನ್ನು ಎಲಿಜಬೇತಳು ಕೇಳಿದ್ದೇ ತಡ, ಆಕೆಯ ಗರ್ಭದಲ್ಲಿ ಶಿಶು ನಲಿದಾಡಿತು; ಎಲಿಜಬೇತಳೂ ಪವಿತ್ರಾತ್ಮಭರಿತಳಾಗಿ,</verse>
				<verse number="42">ಹರ್ಷೋದ್ಗಾರದಿಂದ ಹೀಗೆಂದಳು: “ಸ್ತ್ರೀಯರಲ್ಲೆಲ್ಲಾ ಧನ್ಯಳು ನೀನು; ನಿನ್ನ ಕರುಳ ಕುಡಿಯೂ ಧನ್ಯ!</verse>
				<verse number="43">ನನ್ನ ಪ್ರಭುವಿನ ತಾಯಿ ನೀನು; ನನ್ನ ಬಳಿಗೆ ಬಂದುದು ಅದೆಂಥ ಭಾಗ್ಯ!</verse>
				<verse number="44">ನಿನ್ನ ವಂದನೆಯ ದನಿ ನನ್ನ ಕಿವಿ ತಾಕಿದೊಡನೆ ನಲಿದಾಡಿತು ಆನಂದದಿಂದ, ನನ್ನ ಕರುಳ ಕುಡಿ!</verse>
				<verse number="45">ನಂಬಿ ಧನ್ಯಳಾದೆ ನೀನು, ದೇವರಿಂದ ಬಂದ ವಾರ್ತೆ ನೆರವೇರಿಯೇ ತೀರುವುದೆಂದು.”</verse>
				<verse number="46">ಆಗ ಹೀಗೆಂದು ಮರಿಯಳು ಹೊಗಳಿದಳು:</verse>
				<verse number="47">“ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿ I ಉಲ್ಲಾಸಿಸುತ್ತಿದೆ ಮುಕ್ತಿದಾತ ದೇವನಲಿ II</verse>
				<verse number="48">ತನ್ನ ದಾಸಿಯ ದೀನತೆಯನು ನೆನಪಿಗೆ ತಂದುಕೊಂಡನಾತ I ಧನ್ಯಳೆಂದು ಹೊಗಳುವರೆನ್ನನು ಇಂದಿನಿಂದ ಸರ್ವಜನಾಂಗ II</verse>
				<verse number="49">ಏಕೆನೆ ಮಾಡಿಹನೆನಗೆ ಸರ್ವಶಕ್ತನು ಮಹತ್ಕಾರ್ಯ I ನಿಜಕ್ಕೂ ಆತನ ನಾಮಧೇಯ ಪರಮಪೂಜ್ಯ II</verse>
				<verse number="50">ಆತನಲ್ಲಿ ಭಯಭಕ್ತಿಯುಳ್ಳವರಿಗೆ I ಆತನ ಪ್ರೀತಿ ತಲತಲಾಂತರದವರೆಗೆ II</verse>
				<verse number="51">ಗರ್ವ ಹೃದಯಿಗಳನಾತ ಚದರಿಸಿರುವನು I ಪ್ರದರ್ಶಿಸಿರುವನು ತನ್ನ ಬಾಹುಬಲವನು II</verse>
				<verse number="52">ಇಳಿಸಿಹನು ಗದ್ದುಗೆಯಿಂದ ಘನಾಧಿಪತಿಗಳನು I ಏರಿಸಿರುವನು ಉನ್ನತಿಗೆ ದೀನದಲಿತರನು II</verse>
				<verse number="53">ತೃಪ್ತಿಪಡಿಸಿರುವನಾತ ಹಸಿದವರನು ಮೃಷ್ಟಾನ್ನದಿ I ಹೊರದೂಡಿರುವನು ಸಿರಿವಂತರನು ಬರೀಗೈಯಲಿ II</verse>
				<verse number="54">ನೆರವಾದನು ತನ್ನ ದಾಸ ಇಸ್ರಯೇಲನಿಗೆ I ಪೂರ್ವಜರಿಗಿತ್ತ ವಾಗ್ದಾನದ ಮೇರೆಗೆ II</verse>
				<verse number="55">ಮರೆಯಲಿಲ್ಲ ಆತ ಕರುಣೆತೋರಲು ಅಬ್ರಹಾಮನಿಗೆ I ಅವನ ಸಂತತಿಗೆ, ಯುಗಯುಗಾಂತರದವರೆಗೆ II</verse>
				<verse number="56">ಮರಿಯಳು ಸುಮಾರು ಮೂರು ತಿಂಗಳು ಎಲಿಜಬೇತಳೊಡನೆ ತಂಗಿದ್ದು ತನ್ನ ಮನೆಗೆ ಹಿಂದಿರುಗಿದಳು.</verse>
				<verse number="57">ದಿನ ತುಂಬಿದಾಗ ಎಲಿಜಬೇತಳು ಗಂಡುಮಗುವಿಗೆ ಜನ್ಮವಿತ್ತಳು.</verse>
				<verse number="58">ಸರ್ವೇಶ್ವರ ಆಕೆಗೆ ವಿಶೇಷ ಕೃಪೆ ತೋರಿದ್ದಾರೆಂದು ಅರಿತುಕೊಂಡ ನೆರೆಹೊರೆಯವರೂ ಬಂಧುಬಳಗದವರೂ ಬಂದು ಆಕೆಯೊಡನೆ ಸೇರಿ ಸಂತೋಷಪಟ್ಟರು.</verse>
				<verse number="59">ಎಂಟನೆಯ ದಿನ ಮಗುವಿನ ಸುನ್ನತಿಗಾಗಿ ಅವರು ಬಂದು ಅದಕ್ಕೆ, ತಂದೆಯ ಹೆಸರನ್ನು ಅನುಸರಿಸಿ, ಜಕರೀಯನೆಂದು ನಾಮಕರಣ ಮಾಡುವುದರಲ್ಲಿ ಇದ್ದರು.</verse>
				<verse number="60">ಆದರೆ ಮಗುವಿನ ತಾಯಿ, “ಇಲ್ಲ, ಅದು ಕೂಡದು, ಅವನಿಗೆ ‘ಯೊವಾನ್ನ’ ಎಂಬ ಹೆಸರಿಡಬೇಕು,” ಎಂದಳು.</verse>
				<verse number="61">ಅದಕ್ಕೆ ಅವರು, “ನಿನ್ನ ಬಂಧುಬಳಗದವರಲ್ಲಿ ಯಾರಿಗೂ ಈ ಹೆಸರು ಇಲ್ಲವಲ್ಲಾ,” ಎಂದು ಹೇಳಿ,</verse>
				<verse number="62">“ಮಗುವಿಗೆ ಏನು ಹೆಸರಿಡಬೇಕೆನ್ನುತ್ತೀರಿ?” ಎಂದು ಮಗುವಿನ ತಂದೆಗೆ ಸನ್ನೆಮಾಡಿ ಕೇಳಿದರು.</verse>
				<verse number="63">ಆಗ ಜಕರೀಯನು ಬರೆಯುವ ಒಂದು ಹಲಗೆಯನ್ನು ತರಿಸಿಕೊಂಡು, ‘ಇವನ ಹೆಸರು ಯೊವಾನ್ನ’ ಎಂದು ಬರೆದನು. ಎಲ್ಲರೂ ಬೆರಗಾದರು.</verse>
				<verse number="64">ತಕ್ಷಣವೇ ಅವನಿಗೆ ಬಾಯಿ ಬಂದಿತು; ನಾಲಿಗೆ ಸಡಿಲವಾಯಿತು; ಅವನು ಮಾತನಾಡಲು ಆರಂಭಿಸಿ ದೇವರನ್ನು ಸ್ತುತಿಸಿದನು.</verse>
				<verse number="65">ನೆರೆಹೊರೆಯವರೆಲ್ಲರೂ ತಲ್ಲಣಗೊಂಡರು. ಈ ಸಮಾಚಾರ ಜುದೇಯದ ಗುಡ್ಡಗಾಡು ಪ್ರಾಂತ್ಯದಲ್ಲೆಲ್ಲಾ ಹರಡಿತು.</verse>
				<verse number="66">ಕೇಳಿದವರೆಲ್ಲರೂ ಈ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಂಡು, ‘ಈ ಮಗು ಮುಂದೆ ಎಂಥವನಾಗುವನೋ!’ ಎಂದುಕೊಂಡರು. ನಿಶ್ಚಯವಾಗಿಯೂ ಸರ್ವೇಶ್ವರನ ಅಭಯ ಹಸ್ತವು ಈ ಮಗುವಿನ ಮೇಲಿತ್ತು.</verse>
				<verse number="67">ಆಗ ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಹೀಗೆಂದು ಪ್ರವಾದಿಸಿದನು:</verse>
				<verse number="68">ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ I ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ II</verse>
				<verse number="69">ಉದಯಗೊಳಿಸಿರುವನಾತ ತನ್ನ ದಾಸ ದಾವೀದನ ವಂಶದೊಳು I ನಮಗೊಬ್ಬ ಶಕ್ತಿಯುತ ಮುಕ್ತಿದಾತನನು II</verse>
				<verse number="70">ಪುರಾತನ ಕಾಲದಿಂದಲೆ, ಪೂಜ್ಯ ಪ್ರವಾದಿಗಳ ಬಾಯಿಂದಲೆ I ಅರುಹಿಸಿರುವನು ಇಂತೆಂದು ನಮಗೆ: II</verse>
				<verse number="71">‘ಹಗೆಗಳಿಂದ, ದ್ವೇಷಿಗಳೆಲ್ಲರ ಹಿಡಿತದಿಂದ ನಿಮಗೆ ಅನುಗ್ರಹಿಸುವೆನು ಸಂರಕ್ಷಣೆ’ II</verse>
				<verse number="72">ವ್ಯಕ್ತಪಡಿಸಿರುವನು ಪೂರ್ವಜರಿಗೆ ಪ್ರಮಾಣಿಸಿದ ಪ್ರೀತಿಯನು I ಸ್ಮರಿಸಿಕೊಂಡಿರುವನು ತನ್ನ ಪವಿತ್ರ ಒಡಂಬಡಿಕೆಯನು II</verse>
				<verse number="73">ಪಿತಾಮಹ ಅಬ್ರಹಾಮನಿಗಿತ್ತ ಮಾತಿಗನುಸಾರ I</verse>
				<verse number="74">ನಮಗಿತ್ತಿರುವರು ಶತ್ರುಗಳಿಂದ ರಕ್ಷಿಸುವನೆಂಬ ಅಭಯ II</verse>
				<verse number="75">ಹೀಗೆ ಜೀವಮಾನವೆಲ್ಲ ನಾವು ಆತನ ಸೇವೆ ಮಾಡುವಂತಾಯಿತು ನಿರ್ಭೀತರಾಗಿ I ಆತನ ಸನ್ನಿಧಿಯಲ್ಲಿ ಬಾಳುವಂತಾಯಿತು ಪುನೀತರಾಗಿ, ಸದ್ಭಕ್ತರಾಗಿ II</verse>
				<verse number="76">ಸುಕುಮಾರಾ, ನೀನೆನಿಸಿಕೊಳ್ಳುವೆ ‘ಪರಾತ್ಪರನ ಪ್ರವಾದಿ’ I</verse>
				<verse number="77">ಸರ್ವೇಶ್ವರನ ಮಾರ್ಗವನು ಸಜ್ಜುಗೊಳಿಸುವೆ, ಮುಂದಾಗಿ ತೆರಳಿ II ಪಾಪಕ್ಷಮೆಯನು ಸಾರುವೆ ಆತನ ಪ್ರಜೆಗೆ I ಈ ಮೂಲಕ ಜೀವೋದ್ಧಾರದ ಜ್ಞಾನವನ್ನೀಯುವೆ ಆ ಜನರಿಗೆ II</verse>
				<verse number="78">ಕೃಪಾಸಾಗರ, ದಯಾಮಯ ನಮ್ಮ ದೇವನು I ಆತನ ಕರುಣೆಯಿಂದ ನಮಗಾಯಿತು ಮೇಲಿಂದ ಅರುಣೋದಯವು II</verse>
				<verse number="79">ಬೆಳಗಿಸಲು ಇರುಳಿನಲು, ಮರಣದ ಮುಸುಕಿನಲು ಬಾಳುವವರನು I ನಮ್ಮ ಕಾಲುಗಳನ್ನೂರಿಸಿ ನಡೆಯಲು ಶಾಂತಿಪಥದೊಳು II</verse>
				<verse number="80">ಬಾಲಕನು ಬೆಳೆದಂತೆ ಆತ್ಮಶಕ್ತಿಯುತನಾದನು. ಇಸ್ರಯೇಲ್ ಜನರಿಗೆ ಬಹಿರಂಗವಾಗಿ ಕಾಣಿಸಿಕೊಳ್ಳುವವರೆಗೂ ಅವನು ಬೆಂಗಾಡಿನಲ್ಲೇ ವಾಸಿಸುತ್ತಿದ್ದನು.</verse>
			</chapter>
			<chapter number="2">
				<verse number="1">ಆ ಕಾಲದಲ್ಲಿ ಚಕ್ರವರ್ತಿ ಔಗುಸ್ತನು ತನ್ನ ಸಾಮ್ರಾಜ್ಯದಲ್ಲೆಲ್ಲಾ ಜನಗಣತಿಯಾಗಬೇಕೆಂದು ಆಜ್ಞೆ ಹೊರಡಿಸಿದನು.</verse>
				<verse number="2">ಮೊಟ್ಟ ಮೊದಲನೆಯ ಆ ಜನಗಣತಿ, ಕುರೇನ್ಯನು ಸಿರಿಯ ನಾಡಿಗೆ ರಾಜ್ಯಪಾಲನಾಗಿದ್ದಾಗ ನಡೆಯಿತು.</verse>
				<verse number="3">ಆಗ ಎಲ್ಲರೂ ತಮ್ಮ ಹೆಸರನ್ನು ದಾಖಲೆ ಮಾಡಿಸಿಕೊಳ್ಳಲು ತಮ್ಮ ತಮ್ಮ ಊರುಗಳಿಗೆ ಹೊರಟರು.</verse>
				<verse number="4">ಜೋಸೆಫನು ದಾವೀದನ ಮನೆತನದವನು ಹಾಗೂ ಗೋತ್ರದವನು. ಆದುದರಿಂದ ಅವನೂ ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಿಂದ ಹೊರಟು ಜುದೇಯ ನಾಡಿನ ಬೆತ್ಲೆಹೇಮೆಂಬ ದಾವೀದನ ಊರಿಗೆಹೋದನು.</verse>
				<verse number="5">ಆತನ ಸಂಗಡ ಆತನಿಗೆ ನಿಶ್ಚಿತಾರ್ಥಳಾಗಿದ್ದ ಹಾಗೂ ಪೂರ್ಣ ಗರ್ಭವತಿಯಾಗಿದ್ದ ಮರಿಯಳು ಸಹ ಹೋದಳು.</verse>
				<verse number="6">ಹೀಗೆ ಅವರು ಬೆತ್ಲೆಹೇಮಿನಲ್ಲಿ ಇದ್ದಾಗ, ಮರಿಯಳಿಗೆ ಪ್ರಸವಕಾಲ ಸಮೀಪಿಸಿತು.</verse>
				<verse number="7">ಆಕೆ ಚೊಚ್ಚಲು ಮಗನಿಗೆ ಜನ್ಮವಿತ್ತು, ಇದ್ದ ಬಟ್ಟೆಯಲ್ಲೇ ಸುತ್ತಿ ಅದನ್ನು ಗೋದಲಿಯಲ್ಲಿ ಮಲಗಿಸಿದಳು. ಕಾರಣ - ಛತ್ರದಲ್ಲಿ ಅವರಿಗೆ ಸ್ಥಳ ಸಿಗಲಿಲ್ಲ.</verse>
				<verse number="8">ಅದೇ ನಾಡಿನಲ್ಲಿ ಕೆಲವು ಕುರುಬರು ಹೊಲಗಳಲ್ಲಿದ್ದುಕೊಂಡು ರಾತ್ರಿಯಲ್ಲಿ ಕುರಿಮಂದೆಗಳನ್ನು ಕಾಯುತ್ತಿದ್ದರು.</verse>
				<verse number="9">ಇದ್ದಕ್ಕಿದ್ದಂತೆ ದೇವದೂತನೊಬ್ಬನು ಅವರೆದುರಿಗೆ ಪ್ರತ್ಯಕ್ಷ ಆಗಲು ಸರ್ವೇಶ್ವರನ ಪ್ರಭೆ ಅವರ ಸುತ್ತಲೂ ಪ್ರಕಾಶಿಸಿತು. ಅವರು ಬಹಳವಾಗಿ ಹೆದರಿದರು.</verse>
				<verse number="10">ಆ ದೂತನು ಅವರಿಗೆ, “ಭಯಪಡಬೇಡಿ, ಇಗೋ, ಜನರೆಲ್ಲರಿಗೂ ಪರಮಾನಂದವನ್ನು ತರುವ ಶುಭಸಂದೇಶವನ್ನು ನಿಮಗೆ ತಿಳಿಸುತ್ತೇನೆ.</verse>
				<verse number="11">ಅದೇನೆಂದರೆ, ಇಂದೇ ದಾವೀದನ ಊರಿನಲ್ಲಿ ನಿಮಗೋಸ್ಕರ ಲೋಕೋದ್ಧಾರಕ ಜನಿಸಿದ್ದಾರೆ. ಅವರೇ ಪ್ರಭು ಕ್ರಿಸ್ತ.</verse>
				<verse number="12">ಇಗೋ, ನಿಮಗೊಂದು ಸೂಚನೆ - ಆ ಶಿಶುವನ್ನು ಬಟ್ಟೆಯಲ್ಲಿ ಸುತ್ತಿ ಗೋದಲಿಯೊಂದರಲ್ಲಿ ಮಲಗಿಸಿರುವುದನ್ನು ಕಾಣುವಿರಿ,” ಎಂದನು.</verse>
				<verse number="13">ತಕ್ಷಣವೇ ಆ ದೂತನ ಸಂಗಡ ಸ್ವರ್ಗದ ದೂತಪರಿವಾರವೊಂದು ಕಾಣಿಸಿಕೊಂಡಿತು.</verse>
				<verse number="14">“ಮಹೋನ್ನತದಲ್ಲಿ ದೇವರಿಗೆ ಮಹಿಮೆ; ಭೂಲೋಕದಲ್ಲಿ ದೇವರೊಲಿದ ಮಾನವರಿಗೆ ಶಾಂತಿಸಮಾಧಾನ,” ಎಂದು ಸರ್ವೇಶ್ವರನ ಸ್ತುತಿ ಮಾಡಿತು.</verse>
				<verse number="15">ದೇವದೂತರು ಸ್ವರ್ಗಕ್ಕೆ ಹಿಂದಿರುಗಿದ ಮೇಲೆ ಕುರುಬರು, ‘ಬನ್ನಿ, ಸರ್ವೇಶ್ವರ ನಮಗೆ ತಿಳಿಸಿದ ಘಟನೆಯನ್ನು ನೋಡಲು ಈಗಲೇ ಬೆತ್ಲೆಹೇಮಿಗೆ ಹೋಗೋಣ,’ ಎಂದು ಒಬ್ಬರಿಗೆ ಒಬ್ಬರು ಹೇಳಿಕೊಂಡರು.</verse>
				<verse number="16">ಅಲ್ಲಿಂದ ತ್ವರೆಯಾಗಿ ಹೋಗಿ, ಮರಿಯಳನ್ನೂ ಜೋಸೇಫನನ್ನೂ ಗೋದಲಿಯಲ್ಲಿ ಮಲಗಿದ್ದ ಶಿಶುವನ್ನೂ ಕಂಡರು.</verse>
				<verse number="17">ಕಂಡಮೇಲೆ ಆ ಮಗುವಿನ ವಿಷಯವಾಗಿ ದೂತನು ತಮಗೆ ಹೇಳಿದ್ದನ್ನೆಲ್ಲ ಅವರಿಗೆ ತಿಳಿಯಪಡಿಸಿದರು.</verse>
				<verse number="18">ಕುರುಬರು ಹೇಳಿದ ವಿಷಯವನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.</verse>
				<verse number="19">ಮರಿಯಳಾದರೋ ಈ ವಿಷಯಗಳನ್ನೆಲ್ಲಾ ಮನಸ್ಸಿನಲ್ಲಿಯೇ ಇಟ್ಟುಕೊಂಡು ಆಲೋಚಿಸುತ್ತಾ ಬಂದಳು.</verse>
				<verse number="20">ಇತ್ತ, ಕುರುಬರು ತಾವು ಕೇಳಿದ್ದನ್ನು ನೆನೆಯುತ್ತಾ, ದೇವರ ಮಹಿಮೆಯನ್ನು ಸಾರುತ್ತಾ, ಕೊಂಡಾಡುತ್ತಾ ಹಿಂದಿರುಗಿದರು. ದೇವದೂತನು ಅವರಿಗೆ ತಿಳಿಸಿದಂತೆ ಎಲ್ಲವೂ ಸಂಭವಿಸಿತ್ತು.</verse>
				<verse number="21">ಎಂಟನೆಯ ದಿನ ಶಿಶುವಿಗೆ ಸುನ್ನತಿ ಮಾಡಬೇಕಾಗಿದ್ದ ಸಂದರ್ಭದಲ್ಲಿ ಅದಕ್ಕೆ ‘ಯೇಸು’ ಎಂಬ ಹೆಸರನ್ನಿಟ್ಟು ನಾಮಕರಣ ಮಾಡಿದರು. ಈ ಹೆಸರನ್ನು ಮರಿಯಳು ಗರ್ಭಿಣಿಯಾಗುವುದಕ್ಕೆ ಮುಂಚೆಯೇ ದೂತನು ಸೂಚಿಸಿದ್ದನು.</verse>
				<verse number="22">ಮೋಶೆಯ ನಿಯಮದ ಪ್ರಕಾರ ಸೂತಕ ದಿನಗಳು ಮುಗಿದು ಶುದ್ಧೀಕರಣ ದಿನ ಬಂದಾಗ, ತಂದೆತಾಯಿಗಳು ಆ ಮಗುವನ್ನು ಎತ್ತಿಕೊಂಡು ಜೆರುಸಲೇಮಿಗೆ ಹೋದರು.</verse>
				<verse number="23">ಏಕೆಂದರೆ, ‘ಮೊದಲು ಜನಿಸಿದ ಪ್ರತಿಯೊಂದು ಗಂಡು ಮಗುವನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕಾಗಿತ್ತು.</verse>
				<verse number="24">ಅಲ್ಲದೆ, ಧರ್ಮಶಾಸ್ತ್ರದಲ್ಲೇ ಉಲ್ಲೇಖಿಸಿರುವಂತೆ ಒಂದು ಜೋಡಿ ಬೆಳವಹಕ್ಕಿಗಳನ್ನಾಗಲಿ, ಎರಡು ಪಾರಿವಾಳದ ಮರಿಗಳನ್ನಾಗಲಿ, ಬಲಿಯನ್ನಾಗಿ ಅರ್ಪಿಸಬೇಕಾಗಿತ್ತು.</verse>
				<verse number="25">ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು.</verse>
				<verse number="26">ಸರ್ವೇಶ್ವರ ಕಳುಹಿಸಲಿರುವ ಅಭಿಷಿಕ್ತನಾದ ಲೋಕೋದ್ಧಾರಕನ ದರ್ಶನವಾಗುವವರೆಗೆ ತನಗೆ ಸಾವಿಲ್ಲವೆಂದು ಪವಿತ್ರಾತ್ಮರಿಂದಲೇ ಆಶ್ವಾಸನೆ ಪಡೆದಿದ್ದನು.</verse>
				<verse number="27">ಆ ಪವಿತ್ರಾತ್ಮರಿಂದ ಪ್ರೇರಿತನಾಗಿ ಅವನು ಮಹಾದೇವಾಲಯಕ್ಕೆ ಬಂದನು. ಧರ್ಮಶಾಸ್ತ್ರದ ವಿಧಿಯನ್ನು ಪೂರೈಸಲು ಬಾಲಯೇಸುವನ್ನು ತಂದೆತಾಯಿಗಳು ದೇವಾಲಯಕ್ಕೆ ತಂದಾಗ,</verse>
				<verse number="28">ಸಿಮೆಯೋನನು ಆ ಮಗುವನ್ನು ತನ್ನ ಕೈಗಳಲ್ಲಿ ಎತ್ತಿಕೊಂಡು ದೇವರನ್ನು ಹೀಗೆಂದು ಸ್ತುತಿಸಿದನು:</verse>
				<verse number="29">“ನಿನ್ನ ಮಾತು ಸರ್ವೇಶ್ವರಾ, ನೆರವೇರಿತಿಂದು ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನ್ನು.</verse>
				<verse number="30">ನೀನಿತ್ತ ಉದ್ಧಾರಕನನು ನಾ ಕಂಡೆ ಕಣ್ಣಾರೆ</verse>
				<verse number="31">ಜನರೆಲ್ಲರ ಸಮ್ಮುಖದಲ್ಲಿ ನೀನೀತನನು ಪ್ರತ್ಯಕ್ಷ ಮಾಡಿರುವೆ.</verse>
				<verse number="32">ಈತ ಅನ್ಯಜನರನ್ನು ಬೆಳಗಿಸುವ ಜ್ಯೋತಿ ನಿನ್ನ ಜನ ಇಸ್ರಯೇಲರಿಗೆ ತರುವನು ಕೀರ್ತಿ.”</verse>
				<verse number="33">ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳನ್ನು ಕೇಳಿ ತಂದೆತಾಯಿಗಳು ಆಶ್ಚರ್ಯಪಟ್ಟರು.</verse>
				<verse number="34">ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು.</verse>
				<verse number="35">(ನಿನ್ನ ವಿಷಯದಲ್ಲಿ ಹೇಳುವುದಾದರೆ, ದುಃಖವೆಂಬ ಅಲಗೊಂದು ನಿನ್ನ ಅಂತರಂಗವನ್ನು ಸೀಳುವುದು,)” ಎಂದು ಹೇಳಿದನು.</verse>
				<verse number="36">ಇದಲ್ಲದೆ ಅಲ್ಲಿ ಅಶೇರನ ವಂಶಕ್ಕೆ ಸೇರಿದ ಫನುವೇಲನ ಮಗಳಾದ ಅನ್ನಳೆಂಬ ಪ್ರವಾದಿನಿಯಿದ್ದಳು. ಅವಳು ಮುದಿಪ್ರಾಯದವಳು, ಮದುವೆಯಾಗಿ ಏಳು ವರ್ಷ ಮಾತ್ರ ಗಂಡನೊಡನೆ ಬಾಳಿ ವಿಧವೆಯಾದವಳು.</verse>
				<verse number="37">ಅವಳಿಗೆ ಸುಮಾರು ಎಂಬತ್ತನಾಲ್ಕು ವರ್ಷ ವಯಸ್ಸು. ಮಹಾದೇವಾಲಯವನ್ನು ಬಿಟ್ಟು ಅವಳು ಎಲ್ಲಿಗೂ ಹೋಗುತ್ತಿರಲಿಲ್ಲ; ಹಗಲಿರುಳು ಉಪವಾಸ ಪ್ರಾರ್ಥನೆಗಳಿಂದ ದೇವಾರಾಧನೆಯಲ್ಲಿ ನಿರತಳಾಗಿದ್ದಳು.</verse>
				<verse number="38">ಅವಳು ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದು, ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿ, ಜೆರುಸಲೇಮಿನ ವಿಮೋಚನೆಯನ್ನು ಎದುರು ನೋಡುತ್ತಿದ್ದ ಅಲ್ಲಿಯವರಿಗೆಲ್ಲಾ ಆ ಶಿಶುವಿನ ವಿಷಯವಾಗಿ ಹೇಳತೊಡಗಿದಳು.</verse>
				<verse number="39">ಸರ್ವೇಶ್ವರನ ಧರ್ಮಶಾಸ್ತ್ರಕ್ಕನುಸಾರ ಎಲ್ಲ ವಿಧಿಗಳನ್ನು ನೆರವೇರಿಸಿದ ಮೇಲೆ ಜೋಸೆಫ್ ಮತ್ತು ಮರಿಯಳು ಗಲಿಲೇಯ ಪ್ರಾಂತ್ಯದಲ್ಲಿದ್ದ ತಮ್ಮ ಸ್ವಗ್ರಾಮವಾದ ನಜರೇತಿಗೆ ಹಿಂದಿರುಗಿದರು.</verse>
				<verse number="40">ಬಾಲಕ ಯೇಸು ಬೆಳೆದಂತೆ ಶಕ್ತರೂ ಜ್ಞಾನ ಸಂಪೂರ್ಣರೂ ಆದರು. (ಇದಲ್ಲದೆ) ದೈವಾನುಗ್ರಹ ಅವರ ಮೇಲಿತ್ತು.</verse>
				<verse number="41">ಯೇಸುಸ್ವಾಮಿಯ ತಂದೆತಾಯಿಗಳು ಪ್ರತಿವರ್ಷವೂ ಪಾಸ್ಕಹಬ್ಬಕ್ಕೆ ಜೆರುಸಲೇಮಿಗೆ ಹೋಗುತ್ತಿದ್ದರು.</verse>
				<verse number="42">ಯೇಸುವಿಗೆ ಹನ್ನೆರಡು ವರ್ಷವಾದಾಗ ವಾಡಿಕೆಯ ಪ್ರಕಾರ ಹಬ್ಬಕ್ಕೆ ಹೋದರು.</verse>
				<verse number="43">ಹಬ್ಬ ಮುಗಿಸಿಕೊಂಡು ಅವರು ಹಿಂದಿರುಗಿ ಬರುವಾಗ ಬಾಲಕಯೇಸು ಜೆರುಸಲೇಮಿನಲ್ಲಿಯೇ ಉಳಿದುಬಿಟ್ಟರು.</verse>
				<verse number="44">ಇದು ತಂದೆತಾಯಿಗಳಿಗೆ ತಿಳಿಯದು. ಮಗನು ಯಾತ್ರಿಕರ ಗುಂಪಿನಲ್ಲಿ ಬರುತ್ತಿರಬಹುದೆಂದು ಭಾವಿಸಿ ಒಂದು ದಿನದ ಪ್ರಯಾಣ ಬಂದುಬಿಟ್ಟಿದ್ದರು. ನಂತರ ಮಗನನ್ನು ಕಾಣದೆ ತಮ್ಮ ಬಂಧುಬಳಗದವರಲ್ಲೂ ಪರಿಚಿತರಲ್ಲೂ ಹುಡುಕಾಡಿದರು.</verse>
				<verse number="45">ಅಲ್ಲೆಲ್ಲೂ ಕಾಣದೆ ಅವರನ್ನು ಹುಡುಕಿಕೊಂಡು ಜೆರುಸಲೇಮಿಗೆ ಮರಳಿ ಬಂದರು.</verse>
				<verse number="46">ಮೂರು ದಿನಗಳ ಮೇಲೆ ಮಹಾದೇವಾಲಯದಲ್ಲಿ ಅವರನ್ನು ಕಂಡಾಗ ಅಲ್ಲಿ ಯೇಸು, ಬೋಧಕರ ಮಧ್ಯೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಅವರಿಗೆ ಪ್ರಶ್ನೆಹಾಕುತ್ತಾ ಇದ್ದರು.</verse>
				<verse number="47">ಬಾಲಕನ ಪ್ರಶ್ನೋತ್ತರಗಳನ್ನು ಕೇಳುತ್ತಿದ್ದ ಎಲ್ಲರೂ ಆತನ ಜ್ಞಾನವನ್ನು ಕಂಡು ಬೆರಗಾದರು.</verse>
				<verse number="48">ತಂದೆತಾಯಿಗಳು ಮಗನನ್ನು ಅಲ್ಲಿ ಕಂಡು ವಿಸ್ಮಯಗೊಂಡರು. ಆಗ ತಾಯಿಯು, “ಕಂದಾ, ನಮಗೆ ಏಕೆ ಹೀಗೆ ಮಾಡಿದೆ? ನಿನ್ನ ತಂದೆಯೂ ನಾನೂ ಎಷ್ಟೋ ಕಳವಳಪಟ್ಟು ನಿನ್ನನ್ನು ಹುಡುಕಾಡಿದೆವಲ್ಲಾ,” ಎಂದಳು.</verse>
				<verse number="49">ಅದಕ್ಕೆ ಉತ್ತರವಾಗಿ ಯೇಸು, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಆಲಯದಲ್ಲೇ ಇರಬೇಕೆಂದು ನಿಮಗೆ ತಿಳಿಯದೆಹೋಯಿತೇ?” ಎಂದರು.</verse>
				<verse number="50">ಆದರೆ ಅವರ ಮಾತು ತಂದೆತಾಯಿಗಳಿಗೆ ಅರ್ಥವಾಗಲಿಲ್ಲ.</verse>
				<verse number="51">ಬಳಿಕ ಯೇಸು ತಂದೆತಾಯಿಗಳೊಡನೆ ನಜರೇತಿಗೆ ಬಂದರು. ಅಲ್ಲಿ ಅವರಿಗೆ ವಿಧೇಯರಾಗಿ ನಡೆದುಕೊಳ್ಳುತ್ತಿದ್ದರು. ಈ ವಿಷಯಗಳನ್ನೆಲ್ಲಾ ತಾಯಿ ಮರಿಯಳು ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು.</verse>
				<verse number="52">ಯೇಸು ಬೆಳೆದಂತೆ ಜ್ಞಾನದಲ್ಲಿ ಪ್ರವರ್ಧಿಸುತ್ತಾ ದೇವರಿಗೂ ಮಾನವರಿಗೂ ಅಚ್ಚುಮೆಚ್ಚಾಗುತ್ತಾ ಬಂದರು.</verse>
			</chapter>
			<chapter number="3">
				<verse number="1">ಅದು ತಿಬೇರಿಯಸ್ ಚಕ್ರವರ್ತಿಯ ಆಡಳಿತದ ಹದಿನೈದನೆಯ ವರ್ಷ. ಆ ಕಾಲದಲ್ಲಿ ಜುದೇಯ ಪ್ರಾಂತ್ಯಕ್ಕೆ ಪೊನ್ಸಿಯುಸ್ ಪಿಲಾತನು ರಾಜ್ಯಪಾಲನಾಗಿದ್ದನು. ಗಲಿಲೇಯ ಪ್ರಾಂತ್ಯಕ್ಕೆ ಹೆರೋದನೂ ಇತುರೆಯ ಮತ್ತು ತ್ರಕೋನಿತಿ ಪ್ರಾಂತ್ಯಗಳಿಗೆ ಇವನ ತಮ್ಮನಾದ ಫಿಲಿಪ್ಪನೂ ಮತ್ತು ಅಬಿಲೇನೆ ಪ್ರಾಂತ್ಯಕ್ಕೆ ಲುಸಾನಿಯನೂ ಸಾಮಂತರಾಗಿದ್ದರು.</verse>
				<verse number="2">ಅನ್ನನು ಮತ್ತು ಕಾಯಫನು ಅಂದಿನ ಪ್ರಧಾನ ಯಾಜಕರು. ಆಗ ಬೆಂಗಾಡಿನಲ್ಲಿ ಜಕರೀಯನ ಮಗ ಯೊವಾನ್ನನಿಗೆ ದೇವರ ಸಂದೇಶದ ಬೋಧೆ ಆಯಿತು.</verse>
				<verse number="3">ಆತನು ಜೋರ್ಡನ್ ನದಿಯ ಪರಿಸರ ಪ್ರಾಂತದಲ್ಲೆಲ್ಲಾ ಸಂಚರಿಸುತ್ತಾ, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ ಮತ್ತು ಸ್ನಾನದೀಕ್ಷೆ ಪಡೆದುಕೊಳ್ಳಿರಿ; ದೇವರು ನಿಮ್ಮ ಪಾಪಗಳನ್ನು ಕ್ಷಮಿಸಿಬಿಡುವರು,” ಎಂದು ಸಾರಿ ಹೇಳುತ್ತಿದ್ದನು.</verse>
				<verse number="4">ಈ ಬಗ್ಗೆ ಪ್ರವಾದಿ ಯೆಶಾಯನ ಗ್ರಂಥದಲ್ಲಿ ಮುಂಚಿತವಾಗಿಯೇ ಹೀಗೆಂದು ಬರೆದಿಡಲಾಗಿದೆ: “ ‘ಪ್ರಭುವಿಗಾಗಿ ಮಾರ್ಗವನ್ನು ಸಿದ್ಧಪಡಿಸಿರಿ, ಆತನ ಆಗಮನಕ್ಕಾಗಿ ಹಾದಿಯನ್ನು ಸರಾಗಮಾಡಿರಿ’ ಎಂದು ಬೆಂಗಾಡಿನಲ್ಲಿ ಒಬ್ಬನು ಘೋಷಿಸುತ್ತಿದ್ದಾನೆ.</verse>
				<verse number="5">ಹಳ್ಳಕೊಳ್ಳಗಳೆಲ್ಲ ಭರ್ತಿಯಾಗಬೇಕು; ಬೆಟ್ಟಗುಡ್ಡಗಳು ಮಟ್ಟವಾಗಬೇಕು; ಅಂಕುಡೊಂಕಾದವು ನೆಟ್ಟಗಾಗಬೇಕು; ತಗ್ಗುಮುಗ್ಗಾದ ಹಾದಿಗಳು ಹಸನಾಗಬೇಕು.</verse>
				<verse number="6">ಆಗ ದೇವರು ದಯಪಾಲಿಸುವ ಜೀವೋದ್ಧಾರವನ್ನು ಮಾನವರೆಲ್ಲರು ಕಾಣುವರು.”</verse>
				<verse number="7">ಯೊವಾನ್ನನ ಬಳಿಗೆ ಸ್ನಾನದೀಕ್ಷೆ ಪಡೆಯಲು ಜನರು ಗುಂಪುಗುಂಪಾಗಿ ಬರುತ್ತಿದ್ದರು. ಆತನು ಅವರಿಗೆ, “ಎಲೈ ವಿಷಸರ್ಪಗಳ ಪೀಳಿಗೆಯೇ, ಬರಲಿರುವ ದೈವಕೋಪದಿಂದ ತಪ್ಪಿಸಿಕೊಳ್ಳಬಹುದೆಂದು ನಿಮಗೆ ಎಚ್ಚರಿಕೆಕೊಟ್ಟವರಾರು?</verse>
				<verse number="8">ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ. ‘ಅಬ್ರಹಾಮನೇ ನಮ್ಮ ಪಿತಾಮಹ,’ ಎಂದು ನಿಮ್ಮ ನಿಮ್ಮಲ್ಲೇ ಕೊಚ್ಚಿಕೊಳ್ಳಬೇಡಿ; ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಸಂತಾನ ಪ್ರಾಪ್ತಿಯಾಗುವಂತೆ ಮಾಡಬಲ್ಲರೆಂದು ನಾನು ನಿಮಗೆ ಹೇಳುತ್ತೇನೆ.</verse>
				<verse number="9">ಈಗಾಗಲೇ ಮರದ ಬುಡಕ್ಕೆ ಕೊಡಲಿ ಬಿದ್ದಿದೆ; ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು,” ಎಂದನು.</verse>
				<verse number="10">ಆಗ ಜನಸಮೂಹವು, “ಹಾಗಾದರೆ ನಾವೇನು ಮಾಡಬೇಕು?” ಎಂದು ಕೇಳಲು.</verse>
				<verse number="11">“ನಿಮಗೆ ಎರಡು ಅಂಗಿಗಳಿದ್ದರೆ, ಒಂದನ್ನು ಏನೂ ಇಲ್ಲದವನಿಗೆ ಕೊಡಿ; ಅಂತೆಯೇ ಆಹಾರ ಉಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಉತ್ತರಕೊಟ್ಟನು.</verse>
				<verse number="12">ಅನಂತರ ಸುಂಕದವರು ಸಹ ಸ್ನಾನದೀಕ್ಷೆ ಪಡೆಯಲು ಬಂದು, “ಬೋಧಕರೇ, ನಾವೇನು ಮಾಡಬೇಕು?” ಎಂದು ಕೇಳಿದಾಗ,</verse>
				<verse number="13">ಗೊತ್ತು ಮಾಡಿರುವುದಕ್ಕಿಂತ ಹೆಚ್ಚಾಗಿ ಕಿತ್ತುಕೊಳ್ಳಬೇಡಿ,” ಎಂದನು.</verse>
				<verse number="14">“ನಾವು ಮಾಡಬೇಕಾದುದೇನು?” ಎಂದು ಸಿಪಾಯಿಗಳು ಮುಂದೆ ಬಂದು ಪ್ರಶ್ನಿಸಿದಾಗ, “ಬಲಾತ್ಕಾರದಿಂದಾಗಲಿ, ಸುಳ್ಳು ಬೆದರಿಕೆಯಿಂದಾಗಲಿ ಯಾರನ್ನೂ ಸುಲಿಗೆ ಮಾಡಬೇಡಿ; ನಿಮಗೆ ಬರುವ ಸಂಬಳದಿಂದ ತೃಪ್ತರಾಗಿರಿ,” ಎಂದು ಆತ ಉತ್ತರವಿತ್ತನು.</verse>
				<verse number="15">“ಈ ಯೊವಾನ್ನನೇ ಎಲ್ಲರು ಎದುರುನೋಡುತ್ತಾ ಇರುವ ಅಭಿಷಿಕ್ತನಾದ ಲೋಕೋದ್ಧಾರಕ ಆಗಿರಬಹುದೇ” ಎಂದು ಜನರು ತಮ್ಮ ಮನಸ್ಸಿನಲ್ಲೇ ಆಲೋಚಿಸುತ್ತಿದ್ದರು.</verse>
				<verse number="16">ಅದಕ್ಕೆ ಉತ್ತರವಾಗಿ ಯೊವಾನ್ನನು, “ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ಆದರೆ ನನಗಿಂತಲೂ ಶಕ್ತರೊಬ್ಬರು ಬರುತ್ತಾರೆ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಅರ್ಹನಲ್ಲ; ಅವರು ನಿಮಗೆ ಪವಿತ್ರಾತ್ಮ ಅವರಿಂದಲೂ ಅಗ್ನಿಯಿಂದಲೂ ದೀಕ್ಷಾಸ್ನಾನ ಕೊಡುವರು.</verse>
				<verse number="17">ಅವರ ಕೈಯಲ್ಲಿ ಮೊರವಿದೆ. ತಮ್ಮ ಕಣದಲ್ಲಿಯ ರಾಶಿಯನ್ನು ತೂರಿ, ಗಟ್ಟಿಕಾಳನ್ನು ಮಾತ್ರ ಕಣಜಕ್ಕೆ ತುಂಬುವರು. ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ನುಡಿದನು.</verse>
				<verse number="18">ಹೀಗೆ ಯೊವಾನ್ನನು ನಾನಾ ವಿಧಗಳಲ್ಲಿ ಪ್ರಬೋಧಿಸುತ್ತಾ ಜನರಿಗೆ ಶುಭಸಂದೇಶವನ್ನು ಸಾರುತ್ತಾ ಇದ್ದನು.</verse>
				<verse number="19">ಸಾಮಂತ ಹೆರೋದನು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದನು. ಅಲ್ಲದೆ ತನ್ನ ಸೋದರನ ಹೆಂಡತಿಯಾದ ಹೆರೋದಿಯಳನ್ನು ಇಟ್ಟುಕೊಂಡಿದ್ದನು. ಆದ್ದರಿಂದ ಯೊವಾನ್ನನು ಅವನನ್ನು ಖಂಡಿಸಿದ್ದನು.</verse>
				<verse number="20">ಹೆರೋದನು ಯೊವಾನ್ನನನ್ನು ಕಾರಾಗೃಹದಲ್ಲಿ ಬಂಧಿಸಿ, ತನ್ನ ದುಷ್ಕೃತ್ಯಗಳಿಗೆ ಮತ್ತೊಂದು ದುಷ್ಕೃತ್ಯವನ್ನು ಕೂಡಿಸಿದ್ದನು.</verse>
				<verse number="21">ಜನರೆಲ್ಲರು ಸ್ನಾನದೀಕ್ಷೆ ಪಡೆಯುತ್ತಾ ಇದ್ದರು. ಯೇಸುಸ್ವಾಮಿಯೂ ಬಂದು ಸ್ನಾನದೀಕ್ಷೆಪಡೆದು ಪ್ರಾರ್ಥಿಸುತ್ತಿರಲು, ಆಕಾಶವು ತೆರೆಯಿತು.</verse>
				<verse number="22">ಆಗ ಪವಿತ್ರಾತ್ಮ ಸಶರೀರವಾಗಿ ಒಂದು ಪಾರಿವಾಳದ ರೂಪದಲ್ಲಿ ಯೇಸುವಿನ ಮೇಲೆ ಇಳಿದರು. ಅಲ್ಲದೆ, “ನೀನೇ ನನ್ನ ಪುತ್ರ; ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂಬ ದೈವವಾಣಿ ಕೇಳಿಸಿತು.</verse>
				<verse number="23">ಯೇಸುಸ್ವಾಮಿ ಬೋಧಿಸಲು ಪ್ರಾರಂಭಿಸಿದಾಗ ಅವರಿಗೆ ಸುಮಾರು ಮೂವತ್ತು ವರ್ಷ ವಯಸ್ಸು. ಯೇಸು ಜೋಸೆಫನ ಮಗನೆಂದು ಜನರು ಭಾವಿಸಿದ್ದರು. ಜೋಸೆಫನು ಹೇಲಿಯನಿಗೆ ಹುಟ್ಟಿದನು.</verse>
				<verse number="24">ಹೇಲಿಯನು ಮತ್ತಾತನಿಗೆ, ಮತ್ತಾತನು ಲೇವಿಗೆ, ಲೇವಿ ಮೆಲ್ಕಿಯನಿಗೆ, ಮೆಲ್ಕಿ ಯನ್ನಾಯನಿಗೆ, ಯನ್ನಾಯ ಜೋಸೆಫನಿಗೆ ಹುಟ್ಟಿದರು.</verse>
				<verse number="25">ಜೋಸೆಫ್ ಮತ್ತಥೀಯನಿಗೆ, ಮತ್ತಥೀಯ ಆಮೋಸನಿಗೆ, ಆಮೋಸನು ನಾಹೂಮನಿಗೆ, ನಾಹೂಮ ಎಸ್ಲಿಯನಿಗೆ, ಎಸ್ಲಿಯ ನಗ್ಗಾಯನಿಗೆ ಹುಟ್ಟಿದರು.</verse>
				<verse number="26">ನಗ್ಗಾಯ ಮಹಾಥನಿಗೆ, ಮಹಾಥ ಮತ್ತಥೀಯನಿಗೆ, ಮತ್ತಥೀಯ ಶಿಮಿಯಾನಿಗೆ, ಶಿಮಿಯಾ ಯೊಸೇಖನಿಗೆ ಹುಟ್ಟಿದರು.</verse>
				<verse number="27">ಯೊಸೇಖ ಯೋದನಿಗೆ, ಯೋದನು ಯೊವಾನ್ನನಿಗೆ, ಯೊವಾನ್ನನು ರೇಸನಿಗೆ, ರೇಸನು ಜೆರುಬಾಬೇಲನಿಗೆ, ಜೆರುಬಾಬೆಲ್ ಸಲಥಿಯೇಲನಿಗೆ, ಸಲಥಿಯೇಲನು ಸೇರಿಯನಿಗೆ ಹುಟ್ಟಿದರು.</verse>
				<verse number="28">ಸೇರಿಯನು ಮೆಲ್ಕಿಯನಿಗೆ, ಮೆಲ್ಕಿಯನು ಅದ್ದಿಯನಿಗೆ, ಅದ್ದಿಯನು ಕೋಸಾಮನಿಗೆ, ಕೋಸಾಮ್ ಎಲ್ಮದಾಮನಿಗೆ, ಎಲ್ಮದಾಮ್ ಏರನಿಗೆ ಹುಟ್ಟಿದರು.</verse>
				<verse number="29">ಏರ್ ಯೆಹೋಷುವನಿಗೆ, ಯೆಹೋಷುವ ಎಲಿಯೇಜರನಿಗೆ, ಎಲಿಯೇಜರ್ ಯೋರೈಮನಿಗೆ, ಯೋರೈಮ್ ಮತ್ತಾತನಿಗೆ, ಮತ್ತಾತನು ಲೇವಿಗೆ ಹುಟ್ಟಿದರು.</verse>
				<verse number="30">ಲೇವಿ ಸಿಮಿಯೋನನಿಗೆ, ಸಿಮಿಯೋನ್ ಯೂದನಿಗೆ, ಯೂದ ಜೋಸೆಫನಿಗೆ, ಜೋಸೆಫ್ ಯೊನಾಮನಿಗೆ, ಯೊನಾಮ್ ಎಲಿಯಕೀಮನಿಗೆ ಹುಟ್ಟಿದರು.</verse>
				<verse number="31">ಎಲಿಯಕೀಮ್ ಮೆಲೆಯಾನಿಗೆ, ಮೆಲೆಯಾ ಮೆನ್ನನಿಗೆ, ಮೆನ್ನ ಮತ್ತಾಥನಿಗೆ, ಮತ್ತಾಥ ನಾತಾನನಿಗೆ, ನಾತಾನ್ ದಾವೀದನಿಗೆ ಹುಟ್ಟಿದರು.</verse>
				<verse number="32">ದಾವೀದ್ ಜೆಸ್ಸೆಯನಿಗೆ, ಜೆಸ್ಸೆಯ ಓಬೇದನಿಗೆ, ಓಬೇದ್ ಬೋವಜನಿಗೆ, ಬೋವಜ್ ಸಲ್ಮೋನನಿಗೆ, ಸಲ್ಮೋನ್ ನಹಸ್ಸೋನನಿಗೆ ಹುಟ್ಟಿದರು.</verse>
				<verse number="33">ನಹಸ್ಸೋನ್ ಅಮ್ಮಿನದಾಬನಿಗೆ, ಅಮ್ಮಿನಾದಾಬನು ಅದ್ಮಿನನಿಗೆ, ಅದ್ಮಿನ್ ಆರ್ನೈಯನಿಗೆ, ಆರ್ನೈಯ ಹೆಸ್ರೋನನಿಗೆ, ಹೆಸ್ರೋನ್ ಪೆರೆಸನಿಗೆ, ಪೆರೆಸ್ ಯೂದನಿಗೆ ಹುಟ್ಟಿದರು.</verse>
				<verse number="34">ಯೂದ ಯಕೋಬನಿಗೆ, ಯಕೋಬ್ ಇಸಾಕನಿಗೆ, ಇಸಾಕ ಅಬ್ರಹಾಮನಿಗೆ, ಅಬ್ರಹಾಮ ತೇರನಿಗೆ, ತೇರ ನಹೋರನಿಗೆ ಹುಟ್ಟಿದರು.</verse>
				<verse number="35">ನಹೋರ್ ಸೆರೂಗನಿಗೆ, ಸೆರೂಗ್ ರೆಗೂವನಿಗೆ, ರೆಗೂವ ಪೆಲೆಗನಿಗೆ, ಪೆಲೆಗ್ ಹೇಬೆರನಿಗೆ, ಹೇಬೆರ್ ಸಾಲನಿಗೆ ಹುಟ್ಟಿದರು.</verse>
				<verse number="36">ಸಾಲ ಕಯಿನನಿಗೆ, ಕಯಿನ್ ಅರ್ಫಕ್ಷಾದನಿಗೆ, ಅರ್ಪಕ್ಷಾದ್‍ ಶೇಮನಿಗೆ, ಶೇಮ್ ನೋವನಿಗೆ, ನೋವ ಲಾಮೆಕನಿಗೆ, ಲಾಮೆಕ್ ಮತೂಷಲನಿಗೆ ಹುಟ್ಟಿದರು.</verse>
				<verse number="37">ಮೆತೂಷಲ ಹನೋಕನಿಗೆ, ಹನೋಕ್ ಯೆರೆದನಿಗೆ, ಯೆರೆದ್ ಮಹಲಲೇಲನಿಗೆ, ಮಹಲಲೇಲ್ ಕಯಿನನಿಗೆ ಹುಟ್ಟಿದರು.</verse>
				<verse number="38">ಕಯಿನನ್‍ ಎನೋಷನಿಗೆ, ಎನೋಷ ಸೇತನಿಗೆ, ಸೇತ್ ಆದಾಮನಿಗೆ ಹುಟ್ಟಿದರು. ಆದಾಮನು ದೇವರ ಮಗನು.</verse>
			</chapter>
			<chapter number="4">
				<verse number="1">ಯೇಸುಸ್ವಾಮಿ ಪವಿತ್ರಾತ್ಮಭರಿತರಾಗಿ ಜೋರ್ಡನ್ ನದಿತೀರದಿಂದ ಹಿಂದಿರುಗಿದ ಮೇಲೆ ಅದೇ ಆತ್ಮದಿಂದ ಪ್ರೇರಿತರಾಗಿ ಬೆಂಗಾಡು ಪ್ರದೇಶಕ್ಕೆ ಬಂದರು.</verse>
				<verse number="2">ನಾಲ್ವತ್ತು ದಿನ ಅಲ್ಲಿದ್ದಾಗ ಅವರನ್ನು ಪರೀಕ್ಷಿಸಲು ಪಿಶಾಚಿ ಪ್ರಯತ್ನಿಸಿತು. ಅಷ್ಟು ದಿನಗಳೂ ಏನನ್ನೂ ತಿನ್ನದೆ ಉಪವಾಸವಿದ್ದ ಯೇಸುವಿಗೆ ಆಗ ಹಸಿವಾಯಿತು.</verse>
				<verse number="3">ಆಗ ಪಿಶಾಚಿ, “ನೀನು ದೇವರ ಪುತ್ರ ಎಂಬುದು ಸತ್ಯವಾದರೆ ಈ ಕಲ್ಲಿಗೆ ರೊಟ್ಟಿ ಆಗೆಂದು ಆಜ್ಞೆಮಾಡು,” ಎಂದಿತು.</verse>
				<verse number="4">ಅದಕ್ಕೆ ಯೇಸು, “ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ, ‘ಮಾನವನು ಜೀವಿಸುವುದು ಆಹಾರದಿಂದ ಮಾತ್ರವಲ್ಲ’,” ಎಂದು ಉತ್ತರಿಸಿದರು.</verse>
				<verse number="5">ಬಳಿಕ ಪಿಶಾಚಿ ಯೇಸುವನ್ನು ಎತ್ತರಕ್ಕೆ ಕರೆದೊಯ್ದು ಪ್ರಪಂಚದ ಎಲ್ಲಾ ರಾಜ್ಯಗಳನ್ನು ಕ್ಷಣಮಾತ್ರದಲ್ಲಿ ತೋರಿಸಿ,</verse>
				<verse number="6">“ಇವುಗಳ ಸರ್ವಾಧಿಕಾರವನ್ನೂ ವೈಭವವನ್ನೂ ನಿನಗೆ ಕೊಡುವೆನು. ಇವೆಲ್ಲಾ ನನ್ನ ಅಧೀನದಲ್ಲಿವೆ. ನನ್ನ ಇಷ್ಟಬಂದವರಿಗೆ ಇವನ್ನು ಕೊಡಬಲ್ಲೆ.</verse>
				<verse number="7">ನೀನು ನನಗೆ ಅಡ್ಡಬಿದ್ದೆಯಾದರೆ ಇದೆಲ್ಲಾ ನಿನ್ನದಾಗುವುದು,” ಎಂದಿತು.</verse>
				<verse number="8">ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು; ಅವರೊಬ್ಬರಿಗೇ ಸೇವೆ ಸಲ್ಲಿಸು,’ ಎಂದು ಪವಿತ್ರಗ್ರಂಥದಲ್ಲಿ ಬರೆಯಲಾಗಿದೆ,” ಎಂದರು.</verse>
				<verse number="9">ಅನಂತರ ಪಿಶಾಚಿ ಯೇಸುವನ್ನು ಜೆರುಸಲೇಮಿಗೆ ಕರೆದೊಯ್ದು ಮಹಾದೇವಾಲಯದ ಗೋಪುರದ ತುತ್ತತುದಿಯ ಮೇಲೆ ನಿಲ್ಲಿಸಿ, “ನೀನು ದೇವರ ಪುತ್ರನೆಂಬುದು ಸತ್ಯವಾದರೆ ಇಲ್ಲಿಂದ ಕೆಳಕ್ಕೆ ಧುಮುಕು.</verse>
				<verse number="10">ಏಕೆಂದರೆ, ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ನಿನ್ನನ್ನು ಕಾಪಾಡುವಂತೆ ದೇವರೇ ತಮ್ಮ ದೂತರಿಗೆ ಆಜ್ಞಾಪಿಸುವರು, ಮತ್ತು</verse>
				<verse number="11">‘ಇವರು, ನಿನ್ನ ಕಾಲುಗಳು ಕಲ್ಲುಗಳಿಗೆ ತಾಗದಂತೆ ನಿನ್ನನ್ನು ತಮ್ಮ ಕೈಗಳಲ್ಲಿ ಆತುಕೊಳ್ಳುವರು’, “ ಎಂದಿತು.</verse>
				<verse number="12">ಅದಕ್ಕೆ ಯೇಸು, “ ‘ನಿನ್ನ ದೇವರು ಸರ್ವೇಶ್ವರ; ನೀನು ಅವರನ್ನು ಪರೀಕ್ಷಿಸಬಾರದು,’ ಎಂದು ಸಹ ಪವಿತ್ರಗ್ರಂಥ ಹೇಳುತ್ತದೆ,” ಎಂದು ಉತ್ತರಕೊಟ್ಟರು.</verse>
				<verse number="13">ಹೀಗೆ ಪಿಶಾಚಿ ಯೇಸುವನ್ನು ನಾನಾ ವಿಧದಲ್ಲಿ ಶೋಧಿಸಿದ ನಂತರ ತಕ್ಕ ಕಾಲಬರುವ ತನಕ ಅವರನ್ನು ಬಿಟ್ಟುಹೋಯಿತು.</verse>
				<verse number="14">ಯೇಸುಸ್ವಾಮಿ ಪವಿತ್ರಾತ್ಮ ಶಕ್ತಿಯಿಂದ ಕೂಡಿ ಗಲಿಲೇಯಕ್ಕೆ ಮರಳಿಬಂದರು. ಅವರ ವಿಷಯ ಸುತ್ತಮುತ್ತೆಲ್ಲಾ ಹರಡಿತು.</verse>
				<verse number="15">ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಅವರು ಬೋಧಿಸುತ್ತಾ ಬಂದರು. ಎಲ್ಲರೂ ಅವರನ್ನು ಹೊಗಳುವವರೇ!</verse>
				<verse number="16">ಯೇಸುಸ್ವಾಮಿ ತಾವು ಬೆಳೆದ ಊರಾದ ನಜರೇತಿಗೆ ಬಂದರು. ವಾಡಿಕೆಯ ಪ್ರಕಾರ ಸಬ್ಬತ್‍ದಿನ ಪ್ರಾರ್ಥನಾಮಂದಿರಕ್ಕೆ ಹೋದರು. ಅಲ್ಲಿ ಪವಿತ್ರಗ್ರಂಥವನ್ನು ಓದುವುದಕ್ಕೆ ಅವರು ಎದ್ದುನಿಂತಾಗ,</verse>
				<verse number="17">ಪ್ರವಾದಿ ಯೆಶಾಯನ ಗ್ರಂಥದ ಸುರುಳಿಯನ್ನು ಅವರ ಕೈಗೆ ಕೊಟ್ಟರು. ಅದನ್ನು ಬಿಚ್ಚಿದಾಗ ಈ ಕೆಳಗಿನ ವಚನಗಳು ಯೇಸುವಿನ ಕಣ್ಣಿಗೆ ಬಿದ್ದವು:</verse>
				<verse number="18">“ದೇವರಾತ್ಮ ನನ್ನ ಮೇಲಿದೆ ದೀನದಲಿತರಿಗೆ ಶುಭಸಂದೇಶವನ್ನು ಬೋಧಿಸಲೆಂದು ಅವರೆನ್ನನು ಅಭಿಷೇಕಿಸಿದ್ದಾರೆ; ಬಂಧಿತರಿಗೆ ಬಿಡುಗಡೆಯನ್ನು, ಅಂಧರಿಗೆ ದೃಷ್ಟಿದಾನವನ್ನು ಪ್ರಕಟಿಸಲೂ ಶೋಷಿತರಿಗೆ ಸ್ವಾತಂತ್ರ್ಯ ನೀಡಲೂ</verse>
				<verse number="19">ದೇವರು ತಮ್ಮ ಜನತೆಯನ್ನು ಉದ್ಧರಿಸುವ ಕಾಲ ಬಂತೆಂದು ಸಾರಲೂ ಅವರು ನನ್ನನ್ನು ಕಳುಹಿಸಿದ್ದಾರೆ.”</verse>
				<verse number="20">ಈ ವಾಕ್ಯವನ್ನು ಓದಿ, ಸುರುಳಿಯನ್ನು ಸುತ್ತಿ, ಪ್ರಾರ್ಥನಾಮಂದಿರದ ಸೇವಕನ ಕೈಗಿತ್ತು, ಯೇಸು ಕುಳಿತುಕೊಂಡರು. ಅಲ್ಲಿದ್ದ ಎಲ್ಲರ ಕಣ್ಣುಗಳು ಅವರ ಮೇಲೆಯೇ ನಾಟಿದ್ದವು.</verse>
				<verse number="21">ಆಗ ಯೇಸು, “ನೀವು ಈ ಪವಿತ್ರ ವಾಕ್ಯವನ್ನು ಕೇಳುತ್ತಿದ್ದ ಹಾಗೆಯೇ ಅದು ಇಂದು ನೆರವೇರಿತು,” ಎಂದು ವಿವರಿಸಲಾರಂಭಿಸಿದರು.</verse>
				<verse number="22">ಎಲ್ಲರೂ ಅವರನ್ನು ಬಹುವಾಗಿ ಮೆಚ್ಚಿಕೊಂಡರು. ಅವರ ಬಾಯಿಂದ ಬಂದ ಮಧುರ ಮಾತುಗಳನ್ನು ಕೇಳಿ ಅಚ್ಚರಿಗೊಂಡರು. “ಇವನು ಜೋಸೆಫನ ಮಗನಲ್ಲವೆ?” ಎಂದು ಮಾತನಾಡಿಕೊಂಡರು.</verse>
				<verse number="23">ಅನಂತರ ಯೇಸು ಅವರಿಗೆ, “ ‘ವೈದ್ಯನೇ, ಮೊದಲು ನಿನ್ನನ್ನು ನೀನು ಗುಣಪಡಿಸಿಕೊ’, ಎಂಬ ಗಾದೆಯನ್ನು ನೀವು ನಿಸ್ಸಂದೇಹವಾಗಿ ನನಗೆ ಅನ್ವಯಿಸುವಿರಿ; ಅಲ್ಲದೆ, ‘ಕಫೆರ್ನವುಮಿನಲ್ಲಿ ನೀನು ಎಂಥೆಂಥ ಮಹತ್ಕಾರ್ಯಗಳನ್ನು ಮಾಡಿದೆ ಎಂದು ನಾವು ಕೇಳಿದ್ದೇವೆ; ಅಂಥವುಗಳನ್ನು ಈ ನಿನ್ನ ಸ್ವಂತ ಊರಿನಲ್ಲೂ ಮಾಡು,’ ಎಂದೂ ಹೇಳುವಿರಿ.</verse>
				<verse number="24">ಆದರೆ ಯಾವ ಪ್ರವಾದಿಯೂ ಸ್ವಗ್ರಾಮದಲ್ಲಿ ಸನ್ಮಾನಿತನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.</verse>
				<verse number="25">ಹಿಂದೆ ನಡೆದ ಒಂದು ಸಂಗತಿಯನ್ನು ಕೇಳಿ: ಎಲೀಯನ ಕಾಲದಲ್ಲಿ ಮೂರು ವರ್ಷ ಆರು ತಿಂಗಳು ಮಳೆ ಬಾರದೆ ದೇಶದಲ್ಲೆಲ್ಲಾ ದೊಡ್ಡ ಕ್ಷಾಮ ಬಂದೊದಗಿತ್ತು. ಆಗ ಇಸ್ರಯೇಲ್ ನಾಡಿನಲ್ಲಿ ಎಷ್ಟೋ ಮಂದಿ ವಿಧವೆಯರಿದ್ದರು.</verse>
				<verse number="26">ಅವರಾರ ಬಳಿಗೂ ದೇವರು ಎಲೀಯನನ್ನು ಕಳಿಸಲಿಲ್ಲ. ಸಿದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನ ಒಬ್ಬ ವಿಧವೆಯ ಬಳಿಗೆ ಮಾತ್ರ ಕಳಿಸಿದರು.</verse>
				<verse number="27">ಅಂತೆಯೇ, ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಯೇಲ್ ನಾಡಿನಲ್ಲಿ ಅನೇಕ ಕುಷ್ಠರೋಗಿಗಳು ಇದ್ದರು. ಅವರಲ್ಲಿ ಸಿರಿಯ ದೇಶದ ನಾಮನನನ್ನು ಬಿಟ್ಟು ಮಿಕ್ಕ ಯಾರೂ ಗುಣಮುಖರಾಗಲಿಲ್ಲ,” ಎಂದು ಹೇಳಿದರು.</verse>
				<verse number="28">ಇದನ್ನು ಕೇಳಿ, ಪ್ರಾರ್ಥನಾಮಂದಿರದಲ್ಲಿ ಇದ್ದ ಎಲ್ಲರೂ ಕಡುಕೋಪಗೊಂಡರು.</verse>
				<verse number="29">ಯೇಸುವನ್ನು ಆ ಊರಹೊರಕ್ಕೆ ಎಳೆದುಕೊಂಡು, ತಮ್ಮ ಊರಿದ್ದ ಗುಡ್ಡದ ತುದಿಗೆ ಕೊಂಡೊಯ್ದು, ಅಲ್ಲಿಂದ ಅವರನ್ನು ಕೆಳಕ್ಕೆ ದಬ್ಬಬೇಕೆಂದಿದ್ದರು.</verse>
				<verse number="30">ಯೇಸುವಾದರೋ, ಅವರ ನಡುವೆಯೇ ನಡೆದು, ತಮ್ಮ ದಾರಿ ಹಿಡಿದುಹೋದರು.</verse>
				<verse number="31">ಬಳಿಕ ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದ ಕಫೆರ್ನವುಮ್ ಎಂಬ ಊರಿಗೆ ಬಂದು ಸಬ್ಬತ್‍ದಿನ ಅಲ್ಲಿನ ಜನರಿಗೆ ಬೋಧಿಸುತ್ತಿದ್ದರು.</verse>
				<verse number="32">ಅವರು ಅಧಿಕಾರವಾಣಿಯಿಂದ ಉಪದೇಶಿಸುತ್ತಿದ್ದುದನ್ನು ಕೇಳಿ ಜನರೆಲ್ಲರೂ ಬೆರಗಾದರು.</verse>
				<verse number="33">ದುಷ್ಟದೆವ್ವ ಹಿಡಿದಿದ್ದ ಒಬ್ಬನು ಆ ಪ್ರಾರ್ಥನಾಮಂದಿರದಲ್ಲಿ ಇದ್ದನು.</verse>
				<verse number="34">ಅವನು, “ನಜರೇತಿನ ಯೇಸುವೇ, ನಿಮಗೇಕೆ ನಮ್ಮ ಗೊಡವೆ? ನೀವು ನಮ್ಮ ವಿನಾಶಕ್ಕಾಗಿ ಬಂದವರೇನು? ನೀವು ಯಾರೆಂದು ನನಗೆ ಗೊತ್ತು; ದೇವರಿಂದ ಬಂದ ಪರಮಪೂಜ್ಯರು ನೀವು,” ಎಂದು ಗಟ್ಟಿಯಾಗಿ ಕಿರುಚಿದನು.</verse>
				<verse number="35">ಆದರೆ ಯೇಸು ಅವನನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ತೊಲಗು,” ಎಂದು ದೆವ್ವಕ್ಕೆ ಆಜ್ಞಾಪಿಸಿದರು. ಆ ದೆವ್ವ ಎಲ್ಲರ ಎದುರಿಗೇ ಅವನನ್ನು ಕೆಡವಿ, ಯಾವ ಕೆಡುಕನ್ನೂ ಮಾಡದೆ ಅವನನ್ನು ಬಿಟ್ಟು ಹೋಯಿತು.</verse>
				<verse number="36">ಜನರೆಲ್ಲರೂ ಆಶ್ಚರ್ಯಚಕಿತರಾದರು. “ಎಂಥಾ ಮಾತುಗಳಿವು! ಅಧಿಕಾರದಿಂದಲೂ ಶಕ್ತಿಯಿಂದಲೂ ದೆವ್ವಗಳಿಗೆ ಕೂಡ ಆಜ್ಞೆಮಾಡುತ್ತಾನೆ; ಅವು ಕೂಡ ಈತ ಹೇಳಿದ ಹಾಗೆ ಕೇಳುತ್ತವಲ್ಲಾ!” ಎಂದು ತಮ್ಮತಮ್ಮೊಳಗೇ ಮಾತನಾಡಿಕೊಂಡರು.</verse>
				<verse number="37">ಯೇಸುವಿನ ಸಮಾಚಾರ ಆ ಪ್ರಾಂತ್ಯದಲ್ಲೆಲ್ಲಾ ಹಬ್ಬಿ ಹರಡಿತು.</verse>
				<verse number="38">ಪ್ರಾರ್ಥನಾಮಂದಿರದಿಂದ ಹೊರಟ ಯೇಸುಸ್ವಾಮಿ ಸಿಮೋನನ ಮನೆಗೆ ಬಂದರು. ಆ ಸಿಮೋನನ ಅತ್ತೆ ವಿಷಮಜ್ವರದಿಂದ ನರಳುತ್ತಿದ್ದಳು. ಅಲ್ಲಿದ್ದವರು ಅವಳ ಪರವಾಗಿ ಯೇಸುವಿನಲ್ಲಿ ಮೊರೆಯಿಟ್ಟರು.</verse>
				<verse number="39">ಯೇಸು ಆಕೆಯ ಬಳಿ ನಿಂತು, ಬಾಗಿ, ಜ್ವರಕ್ಕೆ ಬಿಟ್ಟುಹೋಗೆಂದು ಆಜ್ಞಾಪಿಸಿದರು; ಅದು ಬಿಟ್ಟುಹೋಯಿತು. ಆ ಕ್ಷಣವೇ ಆಕೆ ಎದ್ದು ಅವರೆಲ್ಲರನ್ನು ಸತ್ಕರಿಸಿದಳು.</verse>
				<verse number="40">ಸಂಜೆಯಾಗುತ್ತಿದ್ದಂತೆ ಜನರು ತಮ್ಮ ಮನೆಯಲ್ಲಿ ವಿಧವಿಧವಾದ ಕಾಯಿಲೆಯಿಂದ ನರಳುತ್ತಿದ್ದವರನ್ನೆಲ್ಲಾ ಯೇಸುಸ್ವಾಮಿಯ ಬಳಿಗೆ ಕರೆತಂದರು. ಯೇಸು ಪ್ರತಿಯೊಬ್ಬನ ಮೇಲೆ ತಮ್ಮ ಕೈಯಿಟ್ಟು ಗುಣಪಡಿಸಿದರು.</verse>
				<verse number="41">ಅನೇಕರ ಮೈಮೇಲಿದ್ದ ದೆವ್ವಗಳು ಸಹ, “ನೀವು ದೇವರ ಪುತ್ರ,” ಎಂದು ಬೊಬ್ಬೆಹಾಕುತ್ತಾ ಬಿಟ್ಟುಹೋದುವು. ಇವರೇ ‘ಕ್ರಿಸ್ತ’ ಎಂದು ಅವುಗಳು ತಿಳಿದಿದ್ದರಿಂದ ಯೇಸು ಅವುಗಳನ್ನು ಗದರಿಸಿ ಮಾತೆತ್ತಲು ಬಿಡಲಿಲ್ಲ.</verse>
				<verse number="42">ಬೆಳಗಾಗುತ್ತಲೇ, ಯೇಸುಸ್ವಾಮಿ ಅಲ್ಲಿಂದ ಹೊರಟು ನಿರ್ಜನ ಸ್ಥಳಕ್ಕೆ ಹೋದರು. ಜನಸಮೂಹವು ಅವರನ್ನು ಹುಡುಕಿಕೊಂಡು ಅಲ್ಲಿಗೂ ಬಂದಿತು; ತಮ್ಮನ್ನು ಬಿಟ್ಟುಹೋಗಬಾರದೆಂದು ಜನರು ತಡೆಗಟ್ಟಲು ಯತ್ನಿಸಿದರು.</verse>
				<verse number="43">ಅವರಿಗೆ ಯೇಸು, “ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಬೇರೆ ಬೇರೆ ಊರುಗಳಿಗೂ ನಾನು ಬೋಧಿಸಬೇಕಾಗಿದೆ. ನನ್ನನ್ನು ಕಳುಹಿಸಿರುವುದು ಅದಕ್ಕಾಗಿಯೇ,” ಎಂದರು.</verse>
				<verse number="44">ಬಳಿಕ ಜುದೇಯ ಪ್ರಾಂತ್ಯದ ಪ್ರಾರ್ಥನಾಮಂದಿರಗಳಲ್ಲಿ ಯೇಸು ಬೋಧಿಸುತ್ತಿದ್ದರು.</verse>
			</chapter>
			<chapter number="5">
				<verse number="1">ಒಮ್ಮೆ ಯೇಸುಸ್ವಾಮಿ ಗೆನೆಸರೇತ್ ಎಂಬ ಸರೋವರದ ತೀರದಲ್ಲಿ ನಿಂತಿದ್ದಾಗ, ಜನಸಮೂಹವು ದೇವರ ವಾಕ್ಯವನ್ನು ಕೇಳಲು ನೂಕುನುಗ್ಗಲಾಗಿ ಬಂದು ಅವರನ್ನು ಒತ್ತರಿಸುತ್ತಿತ್ತು.</verse>
				<verse number="2">ಆಗ ದಡದ ಮೇಲಿದ್ದ ಎರಡು ದೋಣಿಗಳು ಯೇಸುವಿನ ಕಣ್ಣಿಗೆ ಬಿದ್ದವು. ಬೆಸ್ತರು ದೋಣಿಗಳನ್ನು ಅಲ್ಲಿಯೇ ಬಿಟ್ಟು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.</verse>
				<verse number="3">ಆ ದೋಣಿಗಳಲ್ಲಿ ಒಂದು ಸಿಮೋನನದು. ಯೇಸು ಅದನ್ನು ಹತ್ತಿ ದಡದಿಂದ ಸ್ವಲ್ಪ ದೂರ ತಳ್ಳಲು ಹೇಳಿ, ಅದರಲ್ಲೇ ಕುಳಿತುಕೊಂಡು ತಮ್ಮ ಬೋಧನೆಯನ್ನು ಮುಂದುವರಿಸಿದರು.</verse>
				<verse number="4">ಬೋಧನೆ ಮುಗಿದದ್ದೇ ಸಿಮೋನನಿಗೆ, “ನೀರು ಆಳವಾಗಿರುವ ಸ್ಥಳಕ್ಕೆ ದೋಣಿಯನ್ನು ಹಾಯಿಸಿ, ಮೀನುಬೇಟೆಗೆ ನಿಮ್ಮ ಬಲೆಗಳನ್ನು ಹಾಕಿರಿ,” ಎಂದರು.</verse>
				<verse number="5">ಅದಕ್ಕೆ ಸಿಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ದುಡಿದಿದ್ದೇವೆ; ಏನೂ ಸಿಗಲಿಲ್ಲ. ಆದರೂ ನಿಮ್ಮ ಮಾತಿಗೆ ಬೆಲೆ ಕೊಟ್ಟು ಬಲೆಗಳನ್ನು ಹಾಕುತ್ತೇವೆ,” ಎಂದನು.</verse>
				<verse number="6">ಬಲೆಗಳನ್ನು ಹಾಕಿದ್ದೇ ಮೀನುಗಳು ರಾಶಿರಾಶಿಯಾಗಿ ಸಿಕ್ಕಿಕೊಂಡವು; ಬಲೆಗಳು ಹರಿದುಹೋಗುವುದರಲ್ಲಿದ್ದವು.</verse>
				<verse number="7">ಆದುದರಿಂದ ಬೇರೆ ದೋಣಿಯಲ್ಲಿದ್ದ ತಮ್ಮ ಸಂಗಡಿಗರಿಗೆ ಸನ್ನೆಮಾಡಿ ಸಹಾಯಕ್ಕಾಗಿ ಕರೆದುಕೊಂಡರು. ಅವರೆಲ್ಲರೂ ಸೇರಿ ಮೀನುಗಳನ್ನು ತುಂಬಿಕೊಳ್ಳಲು, ದೋಣಿಗಳೆರಡೂ ಮುಳುಗಲು ಆರಂಭಿಸಿದವು.</verse>
				<verse number="8">ಇದನ್ನು ಕಂಡ ಸಿಮೋನ್ ಪೇತ್ರನು ಯೇಸುವಿನ ಕಾಲಿಗೆ ಬಿದ್ದು, “ಸ್ವಾಮೀ, ನಾನು ಪಾಪಾತ್ಮ; ನನ್ನಿಂದ ದೂರವಿರಿ!” ಎಂದನು.</verse>
				<verse number="9">ಹಿಡಿದ ಮೀನಿನ ರಾಶಿಯನ್ನು ಕಂಡು ಅವನ ಸಂಗಡಿಗರೆಲ್ಲರೂ ನಿಬ್ಬೆರಗಾಗಿ ಹೋಗಿದ್ದರು.</verse>
				<verse number="10">ಸಿಮೋನನ ಪಾಲುಗಾರರಾದ ಜೆಬೆದಾಯನ ಮಕ್ಕಳು - ಯಕೋಬ ಮತ್ತು ಯೊವಾನ್ನರು - ಹಾಗೆಯೇ ಬೆರಗಾಗಿದ್ದರು. ಆಗ ಯೇಸು ಸಿಮೋನನಿಗೆ, “ಹೆದರಬೇಡ, ಇಂದಿನಿಂದ ನೀನು ಮೀನು ಹಿಡಿಯುವ ಬದಲು ಮನುಷ್ಯರನ್ನೇ ಹಿಡಿಯುವವನು ಆಗುವೆ,” ಎಂದರು.</verse>
				<verse number="11">ಆ ಬೆಸ್ತರು ದೋಣಿಗಳನ್ನು ದಡಕ್ಕೆ ಸಾಗಿಸಿದ್ದೇ ಎಲ್ಲವನ್ನು ತ್ಯಜಿಸಿಬಿಟ್ಟು ಯೇಸುವನ್ನು ಹಿಂಬಾಲಿಸಿದರು.</verse>
				<verse number="12">ಯೇಸುಸ್ವಾಮಿ ಒಂದು ಪಟ್ಟಣದಲ್ಲಿ ಇದ್ದಾಗ, ಮೈಯೆಲ್ಲಾ ಕುಷ್ಠ ಹಿಡಿದಿದ್ದ ರೋಗಿ ಒಬ್ಬನು ಅಲ್ಲಿಗೆ ಬಂದು ಅವರಿಗೆ ಅಡ್ಡಬಿದ್ದು, “ಸ್ವಾಮೀ, ತಾವು ಮನಸ್ಸುಮಾಡಿದರೆ ನನ್ನನ್ನು ಗುಣಮಾಡಬಲ್ಲಿರಿ,” ಎಂದು ಬೇಡಿಕೊಂಡನು.</verse>
				<verse number="13">ಯೇಸು ಕೈಚಾಚಿ ಅವನನ್ನು ಮುಟ್ಟಿ, “ಖಂಡಿತವಾಗಿಯೂ ನನಗೆ ಮನಸ್ಸಿದೆ; ನಿನಗೆ ಗುಣವಾಗಲಿ,” ಎಂದರು. ತಕ್ಷಣವೇ ಕುಷ್ಠವು ಮಾಯವಾಗಿ ಅವನು ಗುಣಹೊಂದಿದನು.</verse>
				<verse number="14">ಇದನ್ನು ಯಾರಿಗೂ ಹೇಳಕೂಡದು ಎಂದು ಯೇಸು ಅವನನ್ನು ಎಚ್ಚರಿಸಿ, “ನೀನು ನೆಟ್ಟಗೆ ಯಾಜಕನ ಬಳಿಗೆ ಹೋಗು; ಅವನು ನಿನ್ನನ್ನು ಪರೀಕ್ಷಿಸಿ ನೋಡಲಿ; ನಂತರ ಮೋಶೆ ನಿಯಮಿಸಿರುವ ಪ್ರಕಾರ ನೀನು ಗುಣಹೊಂದಿದ್ದಕ್ಕಾಗಿ ಶುದ್ಧೀಕರಣ ವಿಧಿಯನ್ನು ಅನುಸರಿಸು; ಇದು ಜನರಿಗೆ ಸಾಕ್ಷಿಯಾಗಿರಲಿ,” ಎಂದರು.</verse>
				<verse number="15">ಯೇಸು ಎಷ್ಟು ಎಚ್ಚರಿಸಿದರೋ ಅಷ್ಟೂ ಅಧಿಕವಾಗಿ ಅವರ ಸುದ್ದಿ ಹರಡಿತು. ಅವರ ಉಪದೇಶವನ್ನು ಕೇಳುವುದಕ್ಕೂ ತಮ್ಮತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ತಂಡೋಪತಂಡವಾಗಿ ಬರುತ್ತಿದ್ದರು.</verse>
				<verse number="16">ಯೇಸುವಾದರೋ ನಿರ್ಜನ ಪ್ರದೇಶಕ್ಕೆ ಹೋಗಿ ಎಂದಿನಂತೆ ಪ್ರಾರ್ಥನೆಯಲ್ಲಿ ಮಗ್ನರಾಗುತ್ತಿದ್ದರು.</verse>
				<verse number="17">ಒಮ್ಮೆ ಯೇಸುಸ್ವಾಮಿ ಬೋಧನೆಮಾಡುತ್ತಾ ಇದ್ದಾಗ, ಫರಿಸಾಯರೂ ಧರ್ಮಶಾಸ್ತ್ರಜ್ಞರೂ ಅವರ ಹತ್ತಿರ ಕುಳಿತಿದ್ದರು. ಇವರು ಗಲಿಲೇಯ ಹಾಗೂ ಜುದೇಯ ಪ್ರಾಂತ್ಯದ ಊರೂರುಗಳಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಬಂದಿದ್ದರು. ಗುಣಪಡಿಸುವಂತಹ ದೈವಶಕ್ತಿ ಯೇಸುವಿನಲ್ಲಿತ್ತು.</verse>
				<verse number="18">ಆಗ ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಹಾಸಿಗೆಯ ಸಮೇತ ಹೊತ್ತುಕೊಂಡು ಅಲ್ಲಿಗೆ ಬಂದರು. ರೋಗಿಯನ್ನು ಒಳಕ್ಕೆ ತೆಗೆದುಕೊಂಡು ಹೋಗಿ ಯೇಸುವಿನ ಮುಂದೆಯೇ ಇಡಬೇಕೆಂದು ಪ್ರಯತ್ನಿಸಿದರು.</verse>
				<verse number="19">ಆದರೆ ಜನಸಂದಣಿಯ ನಿಮಿತ್ತ ದಾರಿಮಾಡಲಾಗಲಿಲ್ಲ. ಆಗ ಅವರು ಮನೆಯ ಮೇಲೆ ಹತ್ತಿ, ಹೆಂಚುಗಳನ್ನು ತೆಗೆದು, ಅಲ್ಲಿಂದ ರೋಗಿಯನ್ನು ಹಾಸಿಗೆಯ ಸಹಿತ ಯೇಸುವಿನ ಮುಂದೆ ಇಳಿಸಿದರು.</verse>
				<verse number="20">ಯೇಸು ಅವರ ವಿಶ್ವಾಸವನ್ನು ಮೆಚ್ಚಿ, “ತಮ್ಮಾ, ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.</verse>
				<verse number="21">ಇದನ್ನು ಕೇಳಿದ ಧರ್ಮಶಾಸ್ತ್ರಿಗಳೂ ಫರಿಸಾಯರೂ, “ದೇವದೂಷಣೆ ಆಡುತ್ತಿರುವ ಇವನಾರು? ದೇವರೊಬ್ಬರನ್ನು ಬಿಟ್ಟರೆ ಪಾಪಗಳನ್ನು ಕ್ಷಮಿಸಿ ಪರಿಹರಿಸಲು ಬೇರೆ ಯಾರಿಂದ ಸಾಧ್ಯ?” ಎಂದು ತಮ್ಮಲ್ಲೇ ಹೇಳಿಕೊಳ್ಳಲು ಆರಂಭಿಸಿದರು.</verse>
				<verse number="22">ಯೇಸು ಅವರ ಆಲೋಚನೆಗಳನ್ನು ಗ್ರಹಿಸಿಕೊಂಡು, “ನೀವು ನಿಮ್ಮ ಮನಸ್ಸಿನಲ್ಲಿ ಆಲೋಚಿಸುತ್ತಾ ಇರುವುದೇನು?</verse>
				<verse number="23">‘ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,’ ಎನ್ನುವುದು ಸುಲಭವೋ ಅಥವಾ ‘ಎದ್ದು ನಡೆ’ ಎನ್ನುವುದು ಸುಲಭವೋ?</verse>
				<verse number="24">ಭೂಲೋಕದಲ್ಲಿ ಪಾಪಗಳನ್ನು ಕ್ಷಮಿಸಲು ನರಪುತ್ರನಿಗೆ ಅಧಿಕಾರ ಉಂಟೆಂದು ಈ ಮೂಲಕ ನಿಮಗೆ ಖಚಿತವಾಗಬೇಕು,” ಎಂದು ಹೇಳಿ, ಆ ಪಾರ್ಶ್ವವಾಯು ರೋಗಿಯ ಕಡೆ ನೋಡಿ, “ ‘ಏಳು, ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೊರಡು,’ ಎಂದು ನಿನಗೆ ಆಜ್ಞಾಪಿಸುತ್ತೇನೆ” ಎಂದರು.</verse>
				<verse number="25">ತಕ್ಷಣವೇ ಅವರೆಲ್ಲರೂ ನೋಡುತ್ತಿದ್ದ ಹಾಗೆ ಅವನು ಎದ್ದು, ಮಲಗಿದ್ದ ಹಾಸಿಗೆಯನ್ನು ಎತ್ತಿಕೊಂಡು, ದೇವರನ್ನು ಸ್ತುತಿಸುತ್ತಾ ತನ್ನ ಮನೆಗೆ ಹೋದನು.</verse>
				<verse number="26">ಎಲ್ಲರೂ ನಿಬ್ಬೆರಗಾಗಿ, ‘ನಾವು ಈ ದಿನ ಎಂಥ ಅಪೂರ್ವ ಕಾರ್ಯವನ್ನು ಕಂಡೆವು!’ ಎಂದು ಭಯಭಕ್ತಿಯಿಂದ ದೇವರನ್ನು ಕೊಂಡಾಡಿದರು.</verse>
				<verse number="27">ಅನಂತರ ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿದ್ದಾಗ ಲೇವಿ ಎಂಬ ಸುಂಕದವನನ್ನು ಕಂಡರು. ಅವನು ಸುಂಕ ವಸೂಲಿಗಾಗಿ ಉಕ್ಕಡದಲ್ಲಿ ಕುಳಿತಿದ್ದನು. “ನನ್ನನ್ನು ಹಿಂಬಾಲಿಸು,” ಎಂದು ಹೇಳಿ ಯೇಸು ಅವನನ್ನು ಕರೆದರು.</verse>
				<verse number="28">ಲೇವಿಯು ಎದ್ದು ಎಲ್ಲವನ್ನೂ ಪರಿತ್ಯಜಿಸಿ, ಯೇಸುವನ್ನು ಹಿಂಬಾಲಿಸಿದನು.</verse>
				<verse number="29">ತರುವಾಯ ಆ ಲೇವಿ ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿದನು. ಬಹುಜನ ಸುಂಕದವರೂ ಇತರರೂ ಯೇಸುವಿನ ಪಂಕ್ತಿಯಲ್ಲೇ ಊಟಕ್ಕೆ ಕುಳಿತಿದ್ದರು.</verse>
				<verse number="30">ಇದನ್ನು ಕಂಡ ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಧರ್ಮಶಾಸ್ತ್ರಜ್ಞರು ಗೊಣಗಾಡುತ್ತಾ, ಯೇಸುವಿನ ಶಿಷ್ಯರ ಬಳಿಗೆ ಬಂದು, “ನೀವು ಸುಂಕದವರ ಮತ್ತು ಪಾಪಿಷ್ಠರ ಜೊತೆಯಲ್ಲಿ ಏಕೆ ತಿನ್ನುತ್ತೀರಿ, ಕುಡಿಯುತ್ತೀರಿ?” ಎಂದು ಪ್ರಶ್ನಿಸಿದರು.</verse>
				<verse number="31">ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ವೈದ್ಯನ ಅವಶ್ಯಕತೆಯಿರುವುದು ರೋಗಿಗಳಿಗೆ, ಆರೋಗ್ಯವಂತರಿಗಲ್ಲ;</verse>
				<verse number="32">ನಾನು ಬಂದಿರುವುದು ಧರ್ಮಿಷ್ಠರನ್ನು ಕರೆಯುವುದಕ್ಕಲ್ಲ, ‘ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ, ದೇವರಿಗೆ ಅಭಿಮುಖಿಗಳಾಗಿರಿ’ ಎಂದು ಪಾಪಿಷ್ಠರನ್ನು ಕರೆಯುವುದಕ್ಕೆ,” ಎಂದರು.</verse>
				<verse number="33">“ಯೊವಾನ್ನನ ಶಿಷ್ಯರು ಪದೇಪದೇ ಉಪವಾಸವಿದ್ದು ಪ್ರಾರ್ಥನೆ ಮಾಡುತ್ತಾರೆ. ಅದರಂತೆಯೇ, ಫರಿಸಾಯರ ಶಿಷ್ಯರೂ ಮಾಡುತ್ತಾರೆ. ನಿನ್ನ ಶಿಷ್ಯರಾದರೋ ತಿಂದು ಕುಡಿಯುವುದರಲ್ಲಿಯೇ ಇದ್ದಾರೆ,” ಎಂದು ಕೆಲವರು ಮೂದಲಿಸಿದರು.</verse>
				<verse number="34">ಅದಕ್ಕೆ ಯೇಸು, “ಮದುವಣಿಗನು ಜೊತೆಯಲ್ಲಿರುವಾಗ ಮದುವೆಯ ಅತಿಥಿಗಳನ್ನು ಉಪವಾಸವಿರಿಸಲಾದೀತೆ?</verse>
				<verse number="35">ಮದುವಣಿಗನು ಅವರಿಂದ ಅಗಲಬೇಕಾಗುವ ಕಾಲವು ಬರುವುದು. ಆ ದಿನಗಳು ಬಂದಾಗ ಅವರು ಉಪವಾಸಮಾಡುವರು,” ಎಂದು ಉತ್ತರಕೊಟ್ಟರು.</verse>
				<verse number="36">ಮತ್ತೆ ಅವರಿಗೆ ಯೇಸು ಈ ಸಾಮತಿಯನ್ನು ಹೇಳಿದರು: “ಹಳೆಯ ಅಂಗಿಗೆ ತೇಪೆ ಹಾಕಲು ಹೊಸ ಅಂಗಿಯಿಂದ ತುಂಡನ್ನು ಯಾರೂ ಹರಿಯುವುದಿಲ್ಲ. ಹಾಗೆ ಮಾಡಿದ್ದೇ ಆದರೆ ಹೊಸದೂ ಹರುಕಲಾಗಿ, ಹಳೆಯದೂ ಹೊಸ ತೇಪೆಗೆ ಹೊಂದಿಕೆಯಾಗದೆ ಹೋಗುತ್ತದೆ.</verse>
				<verse number="37">ಅಂತೆಯೇ, ಹಳೆಯ ಬುದ್ದಲಿಗಳಲ್ಲಿ ಹೊಸ ಮದ್ಯವನ್ನು ಯಾರೂ ತುಂಬಿಡುವುದಿಲ್ಲ. ತುಂಬಿ ಇಟ್ಟರೆ, ಹೊಸ ಮದ್ಯವು ಬುದ್ದಲಿಗಳನ್ನು ಬಿರಿಯುತ್ತದೆ; ಮದ್ಯ ಚೆಲ್ಲಿಹೋಗುತ್ತದೆ; ಬುದ್ದಲಿಗಳೂ ಹಾಳಾಗುತ್ತವೆ.</verse>
				<verse number="38">ಆದುದರಿಂದ ಹೊಸ ಮದ್ಯವನ್ನು ಹೊಸ ಬುದ್ದಲಿಗಳಲ್ಲೇ ತುಂಬಿಡಬೇಕು.</verse>
				<verse number="39">ಹಳೆ ಮದ್ಯ ಕುಡಿದವನಿಗೆ ಹೊಸದು ರುಚಿಸುವುದಿಲ್ಲ. ಅವನು ಹಳೆಯದೇ ಶ್ರೇಷ್ಠವೆನ್ನುತ್ತಾನೆ,” ಎಂದರು.</verse>
			</chapter>
			<chapter number="6">
				<verse number="1">ಒಂದು ಸಬ್ಬತ್‍ದಿನ ಯೇಸುಸ್ವಾಮಿ ಗೋದಿಯ ಹೊಲಗಳನ್ನು ಹಾದುಹೋಗುತ್ತಿದ್ದರು. ಅವರ ಶಿಷ್ಯರು ಕೆಲವು ತೆನೆಗಳನ್ನು ಕಿತ್ತು ಕೈಗಳಲ್ಲಿ ಹೊಸಕಿ ತಿನ್ನಲಾರಂಭಿಸಿದರು.</verse>
				<verse number="2">ಅದನ್ನು ಕಂಡ ಫರಿಸಾಯರಲ್ಲಿ ಕೆಲವರು, “ಸಬ್ಬತ್‍ದಿನದಲ್ಲಿ ನಿಷಿದ್ಧವಾದುದನ್ನು ನೀವು ಮಾಡುವುದೇಕೆ?” ಎಂದು ಅವರನ್ನು ಆಕ್ಷೇಪಿಸಿದರು.</verse>
				<verse number="3">ಅದಕ್ಕೆ ಯೇಸು, “ದಾವೀದನು ಮತ್ತು ಅವನ ಸಂಗಡಿಗರು ಹಸಿದಿದ್ದಾಗ ಏನು ಮಾಡಿದರೆಂಬುದನ್ನು ನೀವು ಓದಿರಬೇಕಲ್ಲವೆ?</verse>
				<verse number="4">ದಾವೀದನು ದೇವಮಂದಿರದೊಳಕ್ಕೆ ಹೋಗಿ ಯಾಜಕರ ಹೊರತು ಬೇರೆ ಯಾರೂ ತಿನ್ನಬಾರದಾಗಿದ್ದ ನೈವೇದ್ಯದ ರೊಟ್ಟಿಗಳನ್ನೇ ತೆಗೆದುಕೊಂಡು ತಿಂದುದಲ್ಲದೆ ತನ್ನ ಸಂಗಡಿಗರಿಗೂ ಕೊಟ್ಟನು ಅಲ್ಲವೆ?</verse>
				<verse number="5">ನರಪುತ್ರನು ಸಬ್ಬತ್ತಿಗೆ ಒಡೆಯನಾಗಿದ್ದಾನೆ,” ಎಂದು ಉತ್ತರಕೊಟ್ಟರು.</verse>
				<verse number="6">ಮತ್ತೊಂದು ಸಬ್ಬತ್‍ದಿನ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿದ್ದರು. ಅಲ್ಲಿ ಬಲಗೈ ಬತ್ತಿಹೋಗಿದ್ದ ಒಬ್ಬಾತ ಇದ್ದನು.</verse>
				<verse number="7">ಅವನನ್ನು ಸಬ್ಬತ್‍ದಿನದಲ್ಲಿ ಸ್ವಸ್ಥಪಡಿಸಿದ್ದೇ ಆದರೆ ಯೇಸುವಿನ ವಿರುದ್ಧ ತಪ್ಪು ಹೊರಿಸಬಹುದೆಂಬ ಉದ್ದೇಶದಿಂದ ಧರ್ಮಶಾಸ್ತ್ರಿಗಳು ಮತ್ತು ಫರಿಸಾಯರು ಹೊಂಚುಹಾಕಿ ನೋಡುತ್ತಿದ್ದರು.</verse>
				<verse number="8">ಯೇಸು ಅವರ ಆಲೋಚನೆಗಳನ್ನರಿತು ಬತ್ತಿದ ಕೈ ಉಳ್ಳವನಿಗೆ, “ಬಂದು ಇಲ್ಲಿ ನಿಲ್ಲು,” ಎಂದರು. ಅವನು ಎದ್ದುಬಂದು ನಿಂತನು.</verse>
				<verse number="9">ಆಗ ಯೇಸು ಅವರಿಗೆ, “ನಾನು ನಿಮಗೊಂದು ಪ್ರಶ್ನೆ ಹಾಕುತ್ತೇನೆ: ಸಬ್ಬತ್‍ದಿನದಲ್ಲಿ ಏನು ಮಾಡುವುದು ಧರ್ಮ? ಒಳಿತನ್ನೋ ಅಥವಾ ಕೆಡುಕನ್ನೋ? ಒಬ್ಬನ ಪ್ರಾಣವನ್ನು ಉಳಿಸುವುದೋ ಅಥವಾ ಅಳಿಸುವುದೋ?” ಎಂದರು.</verse>
				<verse number="10">ಅನಂತರ ಸುತ್ತಲೂ ಇದ್ದವರೆಲ್ಲರನ್ನು ದಿಟ್ಟಿಸಿ ನೋಡಿ ಬತ್ತಿದ ಕೈಯುಳ್ಳವನ ಕಡೆಗೆ ತಿರುಗಿ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದ. ಕೈ ಸ್ವಸ್ಥವಾಯಿತು.</verse>
				<verse number="11">ಅವರಾದರೋ ಕ್ರೋಧಭರಿತರಾಗಿ, ಯೇಸುವಿಗೆ ಏನಾದರೂ ಮಾಡಬೇಕೆಂದು ತಮ್ಮತಮ್ಮೊಳಗೆ ಸಂಚುಮಾಡಿದರು.</verse>
				<verse number="12">ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು.</verse>
				<verse number="13">ಬೆಳಗಾದಾಗ ತಮ್ಮ ಶಿಷ್ಯರನ್ನು ಕರೆದು, ಅವರಲ್ಲಿ ಹನ್ನೆರಡು ಮಂದಿಯನ್ನು ಆರಿಸಿಕೊಂಡು, ಅವರಿಗೆ ‘ಪ್ರೇಷಿತರು’ ಎಂದು ಹೆಸರಿಟ್ಚರು.</verse>
				<verse number="14">ಹೀಗೆ ಆಯ್ಕೆ ಆದವರು: ಪೇತ್ರನೆಂದು ಹೆಸರು ಪಡೆದ ಸಿಮೋನ ಮತ್ತು ಅವನ ಸಹೋದರ ಅಂದ್ರೆಯ, ಯಕೋಬ ಮತ್ತು ಯೊವಾನ್ನ, ಫಿಲಿಪ್ಪ ಮತ್ತು ಬಾರ್ತೊಲೊಮಾಯ,</verse>
				<verse number="15">ಮತ್ತಾಯ ಮತ್ತು ತೋಮ, ಅಲ್ಫಾಯನ ಮಗ ಯಕೋಬ ಮತ್ತು ದೇಶಾಭಿಮಾನಿ ಎನಿಸಿಕೊಂಡಿದ್ದ ಸಿಮೋನ,</verse>
				<verse number="16">ಯಕೋಬನ ಮಗ ಯೂದ ಮತ್ತು ಗುರುದ್ರೋಹಿಯಾಗಲಿದ್ದ ಯೂದ ಇಸ್ಕರಿಯೋತ.</verse>
				<verse number="17">ಅನಂತರ ಯೇಸುಸ್ವಾಮಿ ಅವರೊಂದಿಗೆ ಬೆಟ್ಟದಿಂದ ಇಳಿದು, ಸಮತಟ್ಟಾದ ಸ್ಥಳಕ್ಕೆ ಬಂದರು. ಶಿಷ್ಯರ ದೊಡ್ಡ ಗುಂಪು ಅಲ್ಲಿ ನೆರೆದಿತ್ತು. ಜುದೇಯ ಪ್ರಾಂತ್ಯದಿಂದಲೂ ಜೆರುಸಲೇಮ್ ಪಟ್ಟಣದಿಂದಲೂ ಸಮುದ್ರ ತೀರದ ಟೈರ್ ಹಾಗೂ ಸಿದೋನ್ ಪಟ್ಟಣಗಳಿಂದಲೂ ಜನಸಮೂಹ ಅಲ್ಲಿಗೆ ಬಂದಿತ್ತು.</verse>
				<verse number="18">ಯೇಸುವಿನ ಬೋಧನೆಯನ್ನು ಕೇಳುವುದಕ್ಕೂ ತಮ್ಮ ರೋಗರುಜಿನಗಳಿಂದ ವಿಮುಕ್ತರಾಗುವುದಕ್ಕೂ ಜನರು ಅಲ್ಲಿಗೆ ಬಂದು ಸೇರಿದ್ದರು. ದೆವ್ವಪೀಡಿತರು ಕೂಡ ಬಂದು ಸ್ವಸ್ಥರಾಗುತ್ತಿದ್ದರು.</verse>
				<verse number="19">ಯೇಸುವಿನಿಂದ ದಿವ್ಯಶಕ್ತಿ ಹರಿದು ಎಲ್ಲರನ್ನೂ ಗುಣಪಡಿಸುತ್ತಿತ್ತು. ಆದುದರಿಂದ ಅಲ್ಲಿದ್ದ ಜನರೆಲ್ಲರು ಯೇಸುವನ್ನು ಮುಟ್ಟಲು ತವಕಪಡುತ್ತಿದ್ದರು.</verse>
				<verse number="20">ಯೇಸುಸ್ವಾಮಿ ತಮ್ಮ ಶಿಷ್ಯರ ಕಡೆಗೆ ದೃಷ್ಟಿಸಿ ನೋಡಿ ಹೀಗೆಂದು ಬೋಧಿಸಿದರು: “ದೀನದಲಿತರೇ, ನೀವು ಭಾಗ್ಯವಂತರು! ದೇವರ ಸಾಮ್ರಾಜ್ಯ ನಿಮ್ಮದು.</verse>
				<verse number="21">ಈಗ ಹಸಿದಿರುವವರೇ, ನೀವು ಭಾಗ್ಯವಂತರು! ನಿಮಗೆ ಸಂತೃಪ್ತಿಯಾಗುವುದು. ಈಗ ಅತ್ತು ಗೋಳಾಡುವವರೇ, ನೀವು ಭಾಗ್ಯವಂತರು! ನೀವು ನಕ್ಕುನಲಿದಾಡುವಿರಿ!</verse>
				<verse number="22">ನರಪುತ್ರನ ಶಿಷ್ಯರು ನೀವಾದುದರಿಂದ ನಿಮ್ಮನ್ನು ದ್ವೇಷಿಸಿ, ಬಹಿಷ್ಕರಿಸಿ, ಧಿಕ್ಕರಿಸಿ, ನಿಮ್ಮ ಹೆಸರೆತ್ತುವುದು ಕೂಡ ಕೇಡೆಂದು ತಿರಸ್ಕರಿಸುವಾಗ ನೀವು ಭಾಗ್ಯವಂತರು! ಈ ಜನರ ಪೂರ್ವಜರು ಪ್ರವಾದಿಗಳನ್ನು ಹೀಗೆಯೇ ತೆಗಳಿದ್ದರು. ಇದೆಲ್ಲಾ ಸಂಭವಿಸುವಾಗ ಹಿಗ್ಗಿ ನಲಿದಾಡಿರಿ. ಏಕೆಂದರೆ, ಸ್ವರ್ಗದಲ್ಲಿ ನಿಮಗೆ ಲಭಿಸುವ ಪ್ರತಿಫಲವು ಮಹತ್ತರವಾದುದು.</verse>
				<verse number="23"></verse>
				<verse number="24">“ಆದರೆ ಧನಿಕರೇ, ನಿಮಗೆ ಧಿಕ್ಕಾರ! ನೀವು ಸುಖಜೀವನವನ್ನು ಅನುಭವಿಸಿ ಆಗಿದೆ.</verse>
				<verse number="25">ಈಗ ತಿಂದು ತೃಪ್ತಿಯಾಗಿರುವವರೇ, ನಿಮಗೆ ಧಿಕ್ಕಾರ! ನೀವು ಹಸಿದು ಬಳಲುವಿರಿ. ಈಗ ನಕ್ಕುನಲಿದಾಡುವವರೇ, ನಿಮಗೆ ಧಿಕ್ಕಾರ! ನೀವು ದುಃಖಿಸಿ ಗೋಳಾಡುವಿರಿ.</verse>
				<verse number="26">ಜನರೆಲ್ಲರಿಂದ ಹೊಗಳಿಸಿಕೊಳ್ಳುವಾಗ ನಿಮಗೆ ಧಿಕ್ಕಾರ! ಕಪಟ ಪ್ರವಾದಿಗಳೂ ಈ ಜನರ ಪೂರ್ವಜರಿಂದ ಹೀಗೆಯೇ ಹೊಗಳಿಸಿಕೊಂಡಿದ್ದರು.</verse>
				<verse number="27">“ನನ್ನನ್ನು ಆಲಿಸುತ್ತಿರುವವರೇ, ನನ್ನ ಮಾತನ್ನು ಕೇಳಿರಿ: ‘ನಿಮ್ಮ ಶತ್ರುಗಳನ್ನು ಪ್ರೀತಿಸಿರಿ, ನಿಮ್ಮನ್ನು ದ್ವೇಷಿಸುವವರನ್ನು ಸತ್ಕರಿಸಿರಿ.</verse>
				<verse number="28">ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ, ನಿಮ್ಮನ್ನು ನಿಂದಿಸುವವರಿಗಾಗಿ ಪ್ರಾರ್ಥಿಸಿರಿ.</verse>
				<verse number="29">ನಿನ್ನ ಒಂದು ಕೆನ್ನೆಗೆ ಹೊಡೆಯುವವನಿಗೆ ಇನ್ನೊಂದು ಕೆನ್ನೆಯನ್ನು ಒಡ್ಡು, ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳ ಅಂಗಿಯನ್ನೂ ತೆಗೆದುಕೊಳ್ಳಲು ಬಿಡು.</verse>
				<verse number="30">ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ಕೊಡು ನಿನ್ನ ಸೊತ್ತನ್ನು ಕಸಿದುಕೊಳ್ಳುವವನಿಂದ ತಿರುಗಿ ಕೇಳದಿರು.</verse>
				<verse number="31">ಅಲ್ಲದೆ, ಇತರರು ನಿಮಗೆ ಏನೇನು ಮಾಡಬೇಕೆಂದು ನೀವು ಅಪೇಕ್ಷಿಸುತ್ತೀರೋ ಅದನ್ನೇ ನೀವು ಅವರಿಗೆ ಮಾಡಿರಿ.</verse>
				<verse number="32">ನಿಮ್ಮನ್ನು ಪ್ರೀತಿಸುವವರನ್ನೇ ನೀವು ಪ್ರೀತಿಸಿದರೆ ಅದೇನು ಪುಣ್ಯ? ಪಾಪಿಷ್ಠರು ಸಹ ತಮ್ಮನ್ನು ಪ್ರೀತಿಸುವವರನ್ನು ಪ್ರೀತಿಸುತ್ತಾರಲ್ಲವೆ?</verse>
				<verse number="33">ಉಪಕಾರ ಮಾಡಿದವರಿಗೇ ಉಪಕಾರ ಮಾಡಿದರೆ ಅದೇನು ಪುಣ್ಯ? ಪಾಪಿಷ್ಠರು ಸಹ ಹಾಗೆಯೇ ಮಾಡುತ್ತಾರಲ್ಲವೆ?</verse>
				<verse number="34">ಸಾಲತೀರಿಸುವಂಥ ನಂಬಿಗಸ್ಥರಿಗೇ ಸಾಲಕೊಟ್ಟರೆ ಅದೇನು ಪುಣ್ಯ? ಕೊಟ್ಟಷ್ಟೂ ಬರುತ್ತದೆಂದು ಪಾಪಿಷ್ಠರು ಸಹ ಸಾಲ ಕೊಡುತ್ತಾರಲ್ಲವೆ?’</verse>
				<verse number="35">“ಆದುದರಿಂದ ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ಅವನಿಗೆ ಒಳಿತನ್ನೇ ಮಾಡಿರಿ. ಪ್ರತಿಯಾಗಿ ಪಡೆಯುವ ಆಶೆಯಿಡದೆ ಸಾಲಕೊಡಿ. ಆಗ ನಿಮಗೆ ಮಹತ್ತಾದ ಸಂಭಾವನೆ ದೊರಕುವುದು. ನೀವು ಮಹೋನ್ನತ ದೇವರ ಮಕ್ಕಳಾಗುವಿರಿ. ದೇವರು ದುರ್ಜನರಿಗೂ ಒಳ್ಳೆಯವರು, ಕೃತಘ್ನರಿಗೂ ಒಳ್ಳೆಯವರು.</verse>
				<verse number="36">ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ.</verse>
				<verse number="37">“ನೀವು ಇತರರ ಬಗ್ಗೆ ತೀರ್ಪು ಕೊಡಬೇಡಿ. ಆಗ ದೇವರು ನಿಮ್ಮ ಬಗ್ಗೆ ತೀರ್ಪು ಕೊಡುವುದಿಲ್ಲ; ಪರರನ್ನು ದಂಡನೆಗೆ ಗುರಿಮಾಡಬೇಡಿ, ದೇವರು ನಿಮ್ಮನ್ನೂ ದಂಡನೆಗೆ ಗುರಿಮಾಡುವುದಿಲ್ಲ.</verse>
				<verse number="38">ಪರರನ್ನು ಕ್ಷಮಿಸಿರಿ, ದೇವರು ನಿಮ್ಮನ್ನೂ ಕ್ಷಮಿಸುವರು; ಪರರಿಗೆ ಕೊಡಿ, ದೇವರು ನಿಮಗೂ ಕೊಡುವರು; ಅಳತೆಯಲ್ಲಿ ತುಂಬಿ, ಕುಲುಕಿ, ಅದುಮಿ ತುಳುಕುವಂತೆ ಅಳೆದು ನಿಮ್ಮ ಮಡಿಲಿಗೆ ಹಾಕುವರು. ನೀವು ಕೊಟ್ಟ ಅಳತೆಯಲ್ಲೇ ದೇವರು ನಿಮಗೂ ಅಳೆದುಕೊಡುವರು,” ಎಂದರು.</verse>
				<verse number="39">ಯೇಸುಸ್ವಾಮಿ ಅವರಿಗೆ ಈ ಸಾಮತಿಯನ್ನೂ ಹೇಳಿದರು: “ಕುರುಡನು ಕುರುಡನಿಗೆ ದಾರಿ ತೋರಿಸಲಾದೀತೆ? ಇಬ್ಬರೂ ಹಳ್ಳದಲ್ಲಿ ಬೀಳುವುದಿಲ್ಲವೆ?</verse>
				<verse number="40">ಗುರುವಿಗಿಂತ ಶಿಷ್ಯನು ಶ್ರೇಷ್ಠನಲ್ಲ; ಆದರೂ ಪೂರ್ಣ ಶಿಕ್ಷಣ ಪಡೆದ ಪ್ರತಿಯೊಬ್ಬನೂ ಗುರುವಿನಂತೆ ಆಗುವನು.</verse>
				<verse number="41">“ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ನೋಡದೆ, ಸೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ?</verse>
				<verse number="42">ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನೇ ಕಾಣಲಾರದ ನೀನು, ‘ತಮ್ಮಾ ತಾಳು, ನಿನ್ನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಬಿಡುತ್ತೇನೆ,’ ಎಂದು ಸೋದರನಿಗೆ ಹೇಗೆ ಹೇಳಬಲ್ಲೆ? ಎಲೈ ಕಪಟಿಯೇ, ಮೊದಲು ನಿನ್ನ ಕಣ್ಣಿನಲ್ಲಿರುವ ದಿಮ್ಮಿಯನ್ನು ತೆಗೆದುಹಾಕು, ಅನಂತರ ನಿನ್ನ ಸೋದರನ ಕಣ್ಣಿನಲ್ಲಿರುವ ಅಣುವನ್ನು ತೆಗೆದುಹಾಕಲು ನಿನಗೆ ಕಣ್ಣು ನಿಚ್ಚಳವಾಗಿ ಕಾಣಿಸುವುದು.</verse>
				<verse number="43">“ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ; ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.</verse>
				<verse number="44">ಪ್ರತಿಯೊಂದು ಮರದ ಗುಣವನ್ನು ಅದರ ಹಣ್ಣಿನಿಂದ ಗುರುತಿಸಬಹುದು. ಮುಳ್ಳುಗಿಡದಲ್ಲಿ ಅಂಜೂರ ಕೀಳುವಂತಿಲ್ಲ. ಮುಳ್ಳು ಕಳ್ಳಿಯಲ್ಲಿ ದ್ರಾಕ್ಷಿ ಕೊಯ್ಯುವಂತಿಲ್ಲ.</verse>
				<verse number="45">ಒಳ್ಳೆಯವನು ತನ್ನ ಹೃದಯವೆಂಬ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ. ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ. ಹೃದಯದಲ್ಲಿ ತುಂಬಿರುವುದೇ ಬಾಯಿಮಾತಾಗಿ ತುಳುಕುತ್ತದೆ.</verse>
				<verse number="46">“ನೀವು ನನ್ನನ್ನು ‘ಸ್ವಾಮೀ ಸ್ವಾಮೀ,’ ಎಂದು ಕರೆಯುತ್ತೀರಿ; ಆದರೆ ನನ್ನ ಮಾತಿನಂತೆ ನಡೆಯುವುದಿಲ್ಲವೇಕೆ?</verse>
				<verse number="47">ನನ್ನ ಬಳಿಗೆ ಬಂದು ನನ್ನ ಮಾತನ್ನು ಕೇಳಿ, ಅದರಂತೆ ನಡೆಯುವ ಪ್ರತಿಯೊಬ್ಬನೂ ಎಂಥವನಿಗೆ ಸಮಾನನೆಂದು ನಿಮಗೆ ಹೇಳುತ್ತೇನೆ ಕೇಳಿ:</verse>
				<verse number="48">ಆಳವಾಗಿ ಅಡಿಪಾಯ ತೆಗೆದು, ಬಂಡೆಕಲ್ಲಿನ ಮೇಲೆ ಅಸ್ತಿವಾರ ಹಾಕಿ, ಮನೆಕಟ್ಟಿದವನಿಗೆ ಅವನು ಸಮಾನನು; ಹುಚ್ಚು ಹೊಳೆ ಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಕದಲಲಿಲ್ಲ. ಕಾರಣ - ಆ ಮನೆಯನ್ನು ಸುಭದ್ರವಾಗಿ ಕಟ್ಟಲಾಗಿತ್ತು.</verse>
				<verse number="49">ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದವನು ಅಸ್ತಿವಾರವೇ ಇಲ್ಲದೆ ಬರಿಯ ಮಣ್ಣಿನ ಮೇಲೆ ಮನೆ ಕಟ್ಟಿದವನಿಗೆ ಸಮಾನನು. ಆ ಮನೆಗೆ ಪ್ರವಾಹವು ಅಪ್ಪಳಿಸಿದಾಗ ಒಡನೆಯೇ ಅದು ಕುಸಿದು ಬಿತ್ತು. ಆ ಮನೆಗೆ ಒದಗಿದ ಪತನವೋ ವಿಪರೀತ!” ಎಂದರು.</verse>
			</chapter>
			<chapter number="7">
				<verse number="1">ಜನರಿಗೆ ಮನಮುಟ್ಟುವಂತೆ ಬೋಧನೆಮಾಡಿದ ನಂತರ ಯೇಸುಸ್ವಾಮಿ ಕಫೆರ್ನವುಮ್ ಎಂಬ ಊರಿಗೆ ಬಂದರು.</verse>
				<verse number="2">ಅಲ್ಲಿ ರೋಮ್ ಶತಾಧಿಪತಿಯೊಬ್ಬನ ನೆಚ್ಚಿನ ಸೇವಕನು ಕಾಯಿಲೆಯಿಂದ ಸಾಯುವುದರಲ್ಲಿದ್ದನು.</verse>
				<verse number="3">ಶತಾಧಿಪತಿ ಯೇಸುವಿನ ವಿಷಯವನ್ನು ಕೇಳಿ ಅವರ ಬಳಿಗೆ ಯೆಹೂದ್ಯ ಪ್ರಮುಖರನ್ನು ಕಳುಹಿಸಿ, ತನ್ನ ಸೇವಕನನ್ನು ಗುಣಪಡಿಸಲು ಬರಬೇಕೆಂದು ಮನವಿಮಾಡಿಕೊಂಡನು.</verse>
				<verse number="4">ಅವರು ಯೇಸುವಿನ ಬಳಿಗೆ ಬಂದು, “ಆ ಶತಾಧಿಪತಿ ನಿಮ್ಮ ಉಪಕಾರಕ್ಕೆ ಅರ್ಹನು;</verse>
				<verse number="5">ನಮ್ಮ ಜನರ ಮೇಲೆ ಅವನಿಗೆ ಪ್ರೀತಿ ಇದೆ; ಅಲ್ಲದೆ ನಮ್ಮ ಪ್ರಾರ್ಥನಾಮಂದಿರವನ್ನು ಕಟ್ಟಿಸಿಕೊಟ್ಟವನೂ ಅವನೇ,” ಎಂದು ಬಹಳವಾಗಿ ವಿನಂತಿಸಿದರು.</verse>
				<verse number="6">ಯೇಸು ಅವರ ಸಂಗಡವೇ ಹೊರಟರು. ಮನೆಯಿಂದ ಸ್ವಲ್ಪ ದೂರವಿರುವಾಗಲೇ, ಶತಾಧಿಪತಿ ತನ್ನ ಗೆಳೆಯರ ಮುಖಾಂತರ, “ಪ್ರಭುವೇ, ಇಷ್ಟು ಶ್ರಮ ತೆಗೆದುಕೊಳ್ಳಬೇಡಿ; ತಾವು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನಗಿಲ್ಲ.</verse>
				<verse number="7">ನಾನೇ ತಮ್ಮಲ್ಲಿಗೆ ಬರೋಣವೆಂದರೆ ಆ ಯೋಗ್ಯತೆಯೂ ನನಗಿಲ್ಲ. ತಾವು ಒಂದು ಮಾತು ಹೇಳಿದರೆ ಸಾಕು, ನನ್ನ ಸೇವಕ ಸ್ವಸ್ಥನಾಗುವನು.</verse>
				<verse number="8">ಏಕೆಂದರೆ, ನಾನೂ ಮತ್ತೊಬ್ಬರ ಕೈಕೆಳಗಿರುವವನು; ನನ್ನ ಅಧೀನದಲ್ಲೂ ಸೈನಿಕರಿದ್ದಾರೆ. ಅವರಲ್ಲಿ ಒಬ್ಬನಿಗೆ ನಾನು ‘ಬಾ,’ ಎಂದರೆ ಬರುತ್ತಾನೆ. ಇನ್ನೊಬ್ಬನಿಗೆ ‘ಹೋಗು,’ ಎಂದರೆ ಹೋಗುತ್ತಾನೆ. ಸೇವಕನಿಗೆ ‘ಇಂಥದ್ದನ್ನು ಮಾಡು,’ ಎಂದರೆ ಮಾಡುತ್ತಾನೆ,” ಎಂದು ಹೇಳಿ ಕಳುಹಿಸಿದನು.</verse>
				<verse number="9">ಅವನ ಈ ಮಾತುಗಳನ್ನು ಕೇಳಿದಾಗ ಯೇಸುವಿಗೆ ಆಶ್ಚರ್ಯವಾಯಿತು. ತಮ್ಮ ಹಿಂದೆ ಬರುತ್ತಿದ್ದ ಜನರ ಗುಂಪಿನ ಕಡೆ ತಿರುಗಿನೋಡಿ, “ಇಂಥ ಗಾಢ ವಿಶ್ವಾಸವನ್ನು ನಾನು ಇಸ್ರಯೇಲ್ ಜನರಲ್ಲೂ ಕಾಣಲಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.</verse>
				<verse number="10">ಇತ್ತ ಶತಾಧಿಪತಿಯ ಕಡೆಯಿಂದ ಬಂದವರು ಮನೆಗೆ ಹಿಂದಿರುಗಿದಾಗ ಕಾಯಿಲೆಬಿದ್ದಿದ್ದ ಆ ಸೇವಕನು ಸ್ವಸ್ಥನಾಗಿದ್ದುದನ್ನು ಕಂಡರು.</verse>
				<verse number="11">ಇದಾದನಂತರ ಯೇಸುಸ್ವಾಮಿ ನಾಯಿನ್ ಎಂಬ ಊರಿಗೆ ಹೊರಟರು. ಅವರೊಂದಿಗೆ ಶಿಷ್ಯರೂ ಅನೇಕ ಜನರೂ ಹೊರಟರು.</verse>
				<verse number="12">ಊರ ಬಾಗಿಲನ್ನು ಸಮೀಪಿಸಿದಾಗ, ಒಂದು ಶವಯಾತ್ರೆಯನ್ನು ಅವರು ಎದುರುಗೊಂಡರು. ಆ ಸತ್ತವನು ತನ್ನ ತಾಯಿಗೆ ಒಬ್ಬನೇ ಮಗ. ಆಕೆಯೋ ವಿಧವೆ. ಜನರ ದೊಡ್ಡ ಗುಂಪೊಂದು ಆಕೆಯೊಡನೆ ಬರುತ್ತಿತ್ತು.</verse>
				<verse number="13">ಪ್ರಭು ಯೇಸು ಆಕೆಯನ್ನು ಕಂಡದ್ದೇ ಕನಿಕರಗೊಂಡು, ‘ಅಳಬೇಡ’ ಎಂದು ಹೇಳಿ,</verse>
				<verse number="14">ಚಟ್ಟದ ಹತ್ತಿರಕ್ಕೆ ಬಂದು, ಅದನ್ನು ಮುಟ್ಟಿದರು. ಹೊತ್ತುಕೊಂಡು ಹೋಗುತ್ತಿದ್ದವರು ಹಾಗೆಯೇ ನಿಂತರು. ಆಗ ಯೇಸು, “ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು,” ಎಂದರು.</verse>
				<verse number="15">ಸತ್ತವನು ಎದ್ದು ಕುಳಿತು ಮಾತನಾಡಲಾರಂಭಿಸಿದನು. ಯೇಸು ಆ ಮಗನನ್ನು ತಾಯಿಗೆ ಒಪ್ಪಿಸಿದರು.</verse>
				<verse number="16">ಎಲ್ಲರೂ ಭಯಭ್ರಾಂತರಾದರು. “ಮಹಾಪ್ರವಾದಿಯೊಬ್ಬನು ನಮ್ಮಲ್ಲೇ ಉದಯಿಸಿದ್ದಾನೆ; ದೇವರು ತಮ್ಮ ಜನರನ್ನು ರಕ್ಷಿಸಲು ಬಂದಿದ್ದಾರೆ,” ಎಂದು ದೇವರನ್ನು ಕೊಂಡಾಡಿದರು.</verse>
				<verse number="17">ಯೇಸುವಿನ ಈ ಸಮಾಚಾರ ಜುದೇಯ ನಾಡಿನಲ್ಲೆಲ್ಲಾ ಹಾಗೂ ಸುತ್ತಮುತ್ತಲಿನ ಪ್ರಾಂತ್ಯದಲ್ಲೆಲ್ಲಾ ಹರಡಿತು.</verse>
				<verse number="18">ನಡೆದ ಈ ವಿಷಯವೆಲ್ಲ ಯೊವಾನ್ನನಿಗೆ ತನ್ನ ಶಿಷ್ಯರ ಮುಖಾಂತರ ತಿಳಿಯಿತು.</verse>
				<verse number="19">ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು, “ಬರಬೇಕಾದವರು ನೀವೋ ಅಥವಾ ಬೇರೊಬ್ಬನಿಗಾಗಿ ನಾವು ಎದುರು ನೋಡಬೇಕೋ?” ಎಂದು ಯೇಸುಸ್ವಾಮಿಯನ್ನು ಕೇಳಲು ಅವರ ಬಳಿಗೆ ಕಳುಹಿಸಿದನು.</verse>
				<verse number="20">ಆ ಶಿಷ್ಯರು ಯೇಸುವಿನ ಬಳಿಗೆ ಬಂದು, “ಬರಬೇಕಾದವರು ನೀವೋ ಅಥವಾ ನಾವು ಬೇರೊಬ್ಬರನ್ನು ಎದುರು ನೋಡಬೇಕೊ ಎಂದು ವಿಚಾರಿಸಲು ಸ್ನಾನಿಕ ಯೊವಾನ್ನ ನಮ್ಮನ್ನು ತಮ್ಮ ಬಳಿಗೆ ಕಳುಹಿಸಿದ್ದಾರೆ,” ಎಂದರು.</verse>
				<verse number="21">ಅದೇ ಸಮಯದಲ್ಲಿ ಯೇಸು ರೋಗರುಜಿನಗಳಿಂದ ನರಳುತ್ತಿದ್ದ ಹಾಗೂ ದೆವ್ವ ಹಿಡಿದಿದ್ದ ಅನೇಕರನ್ನು ಗುಣಪಡಿಸುತ್ತಿದ್ದರು ಮತ್ತು ಹಲವುಮಂದಿ ಕುರುಡರಿಗೆ ದೃಷ್ಟಿಯನ್ನು ದಯಪಾಲಿಸುತ್ತಿದ್ದರು.</verse>
				<verse number="22">ಯೇಸು ಅವರಿಗೆ ಪ್ರತ್ಯುತ್ತರವಾಗಿ, “ನೀವು ಕಂಡದ್ದನ್ನೂ ಕೇಳಿದ್ದನ್ನೂ ಯೊವಾನ್ನನಿಗೆ ಹೋಗಿ ತಿಳಿಸಿರಿ: ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಸ್ವಸ್ಥರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಮತ್ತೆ ಜೀವ ಪಡೆಯುತ್ತಾರೆ. ದೀನದಲಿತರಿಗೆ ಶುಭಸಂದೇಶವನ್ನು ಪ್ರಕಟಿಸಲಾಗುತ್ತಿದೆ.</verse>
				<verse number="23">ನನ್ನಲ್ಲಿ ವಿಶ್ವಾಸ ಕಳೆದುಕೊಳ್ಳದವನು ಭಾಗ್ಯವಂತನು,” ಎಂದು ಹೇಳಿ ಕಳುಹಿಸಿದರು.</verse>
				<verse number="24">ಬಂದಿದ್ದ ಶಿಷ್ಯರು ಹಿಂದಕ್ಕೆ ಹೋದ ಬಳಿಕ, ಯೇಸು ಜನಸಮೂಹಕ್ಕೆ ಯೊವಾನ್ನನನ್ನು ಕುರಿತು ಹೀಗೆಂದರು: “ಬೆಂಗಾಡಿನಲ್ಲಿ ನೀವು ಏನನ್ನು ನೋಡಲೆಂದು ಹೋದಿರಿ? ಗಾಳಿಗೆ ಓಲಾಡುವ ಜೊಂಡನ್ನೇ?</verse>
				<verse number="25">ಇಲ್ಲವಾದರೆ ಮತ್ತೇನನ್ನು ನೋಡಹೋದಿರಿ? ನಯವಾದ ರೇಷ್ಮೆ ಉಡುಪನ್ನು ಧರಿಸಿರುವ ವ್ಯಕ್ತಿಯನ್ನೇ? ಅಂಥ ಶೃಂಗಾರವಾದ ಉಡುಗೆತೊಡುಗೆಯನ್ನು ಧರಿಸಿ, ಭೋಗಜೀವನ ನಡೆಸುವವರು ಅರಮನೆಗಳಲ್ಲಿರುತ್ತಾರಷ್ಟೆ!</verse>
				<verse number="26">ಹಾಗಾದರೆ ನೀವು ಇನ್ನೇನನ್ನು ನೋಡಲು ಹೋದಿರಿ? ಪ್ರವಾದಿಯನ್ನೇ? ಹೌದು, ಪ್ರವಾದಿಗಿಂತಲೂ ಶ್ರೇಷ್ಠನಾದವನನ್ನು ನೋಡಿದಿರಿ, ಎಂಬುದು ನಿಜ.</verse>
				<verse number="27">“ ‘ಇಗೋ, ನನ್ನ ದೂತನನ್ನು ನಿನಗೆ ಮುಂದಾಗಿ ಕಳುಹಿಸುವೆನು. ಆತನು ನಿನ್ನ ಮಾರ್ಗವನ್ನು ಮುಂಚಿತವಾಗಿ ಸಿದ್ಧಗೊಳಿಸುವನು,’ - ಎಂದು ಪವಿತ್ರಗ್ರಂಥದಲ್ಲಿ ಪ್ರಸ್ತಾಪಿಸಿರುವುದು ಈ ಯೊವಾನ್ನನನ್ನು ಕುರಿತೇ.</verse>
				<verse number="28">ಮಾನವನಾಗಿ ಜನಿಸಿದ ಯಾವನೂ ಸ್ನಾನಿಕ ಯೊವಾನ್ನನಿಗಿಂತ ಶ್ರೇಷ್ಠನಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಆದರೂ ದೇವರ ಸಾಮ್ರಾಜ್ಯದಲ್ಲಿ ಕನಿಷ್ಠನು ಕೂಡ ಅವನಿಗಿಂತ ಶ್ರೇಷ್ಠನೇ ಸರಿ,” ಎಂದರು.</verse>
				<verse number="29">ಯೊವಾನ್ನನ ಉಪದೇಶವನ್ನು ಜನಸಾಮಾನ್ಯರೆಲ್ಲರೂ ಕೇಳಿದರು. ಅವರು, ವಿಶೇಷವಾಗಿ ಸುಂಕದವರು, ದೈವಯೋಜನೆಗೆ ತಲೆಬಾಗಿ ಆತನಿಂದ ಸ್ನಾನದೀಕ್ಷೆಯನ್ನು ಪಡೆದರು.</verse>
				<verse number="30">ಆದರೆ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು ತಮ್ಮನ್ನು ಕುರಿತಾದ ದೈವೇಚ್ಛೆಯನ್ನು ಅಲ್ಲಗಳೆದು, ಯೊವಾನ್ನನಿಂದ ಸ್ನಾನದೀಕ್ಷೆಯನ್ನು ಪಡೆಯದೆಹೋದರು.</verse>
				<verse number="31">ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಂದುವರಿಸುತ್ತಾ, “ಈ ಕಾಲದ ಜನರನ್ನು ಯಾರಿಗೆ ಹೋಲಿಸಲಿ? ಇವರು ಯಾರನ್ನು ಹೋಲುತ್ತಾರೆ?</verse>
				<verse number="32">ಪೇಟೆಬೀದಿಯಲ್ಲಿ ಕುಳಿತು, ‘ನಾವು ಕೊಳಲನೂದಲು ನೀವು ಕುಣಿದಾಡಲಿಲ್ಲ; ನಾವು ಶೋಕಗೀತೆಗಳ ಹಾಡಲು ನೀವು ಕಣ್ಣೀರಿಡಲಿಲ್ಲ.’ ಎಂದು ಒಬ್ಬರಿಗೊಬ್ಬರು ಕೂಗಾಡುವ ಮಕ್ಕಳನ್ನು ಹೋಲುತ್ತಾರೆ.</verse>
				<verse number="33">ಸ್ನಾನಿಕ ಯೊವಾನ್ನನು ಬಂದಾಗ ಅನ್ನ ಆಹಾರವನ್ನು ಸೇವಿಸಲಿಲ್ಲ, ದ್ರಾಕ್ಷಾರಸವನ್ನು ಮುಟ್ಟಲಿಲ್ಲ; ನೀವು, ‘ಅವನಿಗೆ ದೆವ್ವ ಹಿಡಿದಿದೆ’ ಎಂದು ಹೇಳಿದಿರಿ;</verse>
				<verse number="34">ನರಪುತ್ರನು ಬಂದಾಗ ಅನ್ನ ಪಾನೀಯಗಳನ್ನು ಸೇವಿಸಿದನು; ನೀವು, ‘ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ,’ ಎನ್ನುತ್ತೀರಿ.</verse>
				<verse number="35">ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದನ್ನು ಅಂಗೀಕರಿಸುವ ಎಲ್ಲರೂ ಸಮರ್ಥಿಸುತ್ತಾರೆ,” ಎಂದರು.</verse>
				<verse number="36">ಒಬ್ಬ ಫರಿಸಾಯನು ಯೇಸುಸ್ವಾಮಿಯನ್ನು ಊಟಕ್ಕೆ ಆಹ್ವಾನಿಸಿದನು. ಯೇಸು ಅವನ ಮನೆಗೆ ಹೋಗಿ ಊಟಕ್ಕೆ ಕುಳಿತರು.</verse>
				<verse number="37">ಅದೇ ಊರಿನಲ್ಲಿ ಪತಿತೆಯೊಬ್ಬಳು ಇದ್ದಳು. ಆಕೆ, ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕುಳಿತಿದ್ದಾರೆಂದು ಕೇಳಿ ಒಂದು ಅಮೃತಶಿಲೆಯ ಭರಣಿ ತುಂಬ ಸುಗಂಧ ತೈಲವನ್ನು ತೆಗೆದುಕೊಂಡು ಅಲ್ಲಿಗೆ ಬಂದಳು.</verse>
				<verse number="38">ಅವಳು ಯೇಸುವಿನ ಹಿಂಬದಿಯಲ್ಲಿ ಅಳುತ್ತಾನಿಂತು, ತನ್ನ ಕಂಬನಿಯಿಂದ ಅವರ ಪಾದಗಳನ್ನು ತೊಳೆದು ತಲೆಕೂದಲಿನಿಂದ ಒರಸಿ, ಆ ಪಾದಗಳಿಗೆ ಮುತ್ತಿಟ್ಟು, ಸುಗಂಧ ತೈಲವನ್ನುಹಚ್ಚಿದಳು.</verse>
				<verse number="39">ಯೇಸುವನ್ನು ಆಹ್ವಾನಿಸಿದ ಫರಿಸಾಯನು ಇದನ್ನು ನೋಡಿ, ‘ಇವನು ನಿಜವಾಗಿಯೂ ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟುತ್ತಿರುವ ಇವಳು ಯಾರು, ಎಂಥಾ ಪತಿತಳು, ಎಂದು ತಿಳಿದುಕೊಳ್ಳುತ್ತಿದ್ದನು’ ಎಂದು ತನ್ನೊಳಗೇ ಅಂದುಕೊಂಡನು.</verse>
				<verse number="40">ಅದಕ್ಕೆ ಯೇಸು, “ಸಿಮೋನ್, ನಾನು ನಿನಗೆ ಹೇಳಬೇಕಾದ ವಿಷಯ ಒಂದಿದೆ,” ಎಂದರು. ಸಿಮೋನನು, “ಅದೇನು ಹೇಳಿ ಗುರುವೇ,” ಎಂದನು.</verse>
				<verse number="41">ಆಗ ಯೇಸು, “ಒಬ್ಬ ಸಾಲಿಗನಿಗೆ ಇಬ್ಬರು ಸಾಲಗಾರರಿದ್ದರು. ಒಬ್ಬನು ಐನೂರು, ಇನ್ನೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನು ಅವನಿಗೆ ಸಾಲ ಕೊಡಬೇಕಾಗಿತ್ತು.</verse>
				<verse number="42">ಆ ಇಬ್ಬರಿಗೂ ಸಾಲ ತೀರಿಸಲು ಸಾಧ್ಯವಾಗಲಿಲ್ಲ. ಸಾಲಿಗನು ಇಬ್ಬರ ಸಾಲವನ್ನು ಮನ್ನಾ ಮಾಡಿದನು. ಈಗ ಹೇಳು, ಈ ಇಬ್ಬರಲ್ಲಿ “ಯಾರಿಗೆ ಆ ಸಾಲಿಗನ ಮೇಲೆ ಹೆಚ್ಚು ಪ್ರೀತಿ?” ಎಂದು ಕೇಳಿದರು.</verse>
				<verse number="43">ಅದಕ್ಕೆ ಸಿಮೋನನು, “ಯಾರು ಹೆಚ್ಚು ಸಾಲದಿಂದ ಬಿಡುಗಡೆ ಹೊಂದಿದ್ದಾನೋ ಅವನೇ ಎಂದು ತೋರುತ್ತದೆ,” ಎಂದನು. “ಸರಿಯಾಗಿ ಹೇಳಿದೆ,” ಎಂದರು ಯೇಸು.</verse>
				<verse number="44">ಅನಂತರ ಆ ಮಹಿಳೆಯ ಕಡೆ ತಿರುಗಿ ಸಿಮೋನನಿಗೆ, “ಈಕೆಯನ್ನು ನೋಡಿದೆಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಈಕೆಯಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತಲೆಗೂದಲಿನಿಂದ ಒರಸಿರುವಳು.</verse>
				<verse number="45">ನೀನು ನನಗೆ ಮುತ್ತಿಟ್ಟು ಸ್ವಾಗತಿಸಲಿಲ್ಲ; ಆದರೆ ಈಕೆ ಒಳಗೆ ಬಂದಾಗಿನಿಂದ ನನ್ನ ಪಾದಗಳಿಗೆ ಮುತ್ತಿಡುವುದನ್ನು ನಿಲ್ಲಿಸಿಲ್ಲ;</verse>
				<verse number="46">ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಈಕೆಯೋ ನನ್ನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿರುವಳು.</verse>
				<verse number="47">ಆದ್ದರಿಂದ ನಾನು ನಿಮಗೆ ಹೇಳುವುದೇನೆಂದರೆ, ಈಕೆ ಮಾಡಿದ ಪಾಪಗಳು ಅಪಾರವಾದರೂ ಅವನ್ನು ಕ್ಷಮಿಸಲಾಗಿವೆ; ಇದಕ್ಕೆ ಈಕೆ ತೋರಿಸಿರುವ ಅಧಿಕವಾದ ಪ್ರೀತಿಯೇ ಸಾಕ್ಷಿ. ಕಡಿಮೆ ಕ್ಷಮೆಪಡೆದವನು ಕಡಿಮೆ ಪ್ರೀತಿ ತೋರಿಸುತ್ತಾನೆ,” ಎಂದರು.</verse>
				<verse number="48">ಅನಂತರ ಯೇಸು ಆ ಮಹಿಳೆಗೆ: “ನಿನ್ನ ಪಾಪಗಳನ್ನು ಕ್ಷಮಿಸಲಾಗಿದೆ,” ಎಂದರು.</verse>
				<verse number="49">ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರು ಇದನ್ನು ಕೇಳಿ, “ಪಾಪಗಳನ್ನು ಕೂಡ ಕ್ಷಮಿಸುವ ಈತ ಯಾರು?” ಎಂದು ತಮ್ಮತಮ್ಮಲ್ಲೇ ಹೇಳಿಕೊಂಡರು.</verse>
				<verse number="50">ಯೇಸು ಆಕೆಗೆ, “ನಿನ್ನ ವಿಶ್ವಾಸ ನಿನ್ನನ್ನು ಉದ್ಧಾರಮಾಡಿದೆ; ಸಮಾಧಾನದಿಂದ ಹೋಗು,” ಎಂದರು.</verse>
			</chapter>
			<chapter number="8">
				<verse number="1">ತರುವಾಯ ಯೇಸುಸ್ವಾಮಿ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರುತ್ತಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚಾರಮಾಡಿದರು. ಹನ್ನೆರಡು ಮಂದಿ ಶಿಷ್ಯರೂ ಅವರೊಡನೆ ಇದ್ದರು.</verse>
				<verse number="2">ದೆವ್ವಗಳ ಕಾಟದಿಂದಲೂ ರೋಗರುಜಿನಗಳಿಂದಲೂ ಬಿಡುಗಡೆ ಹೊಂದಿದ್ದ ಕೆಲವು ಮಹಿಳೆಯರು ಅವರ ಜೊತೆಯಲ್ಲಿದ್ದರು. ಅವರಾರೆಂದರೆ: ಏಳು ದೆವ್ವಗಳಿಂದ ವಿಮುಕ್ತಳಾಗಿದ್ದ ಮಗ್ದಲದ ಮರಿಯಳು,</verse>
				<verse number="3">ಹೆರೋದನ ಅರಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಪತ್ನಿ ಯೊವಾನ್ನಳು, ಅಲ್ಲದೆ ಸುಸಾನ್ನಳು, ಮತ್ತಿತರ ಅನೇಕರು. ಇವರು ತಮ್ಮ ಆಸ್ತಿಪಾಸ್ತಿಯನ್ನು ವೆಚ್ಚಮಾಡಿ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರ ಮಾಡುತ್ತಿದ್ದರು.</verse>
				<verse number="4">ಜನರು ಊರೂರುಗಳಿಂದ ಹೊರಟು ಯೇಸುಸ್ವಾಮಿಯ ಬಳಿಗೆ ಬಂದರು. ಜನಸಮೂಹವು ಹೆಚ್ಚುತ್ತಿದ್ದಂತೆ ಯೇಸು ಈ ಸಾಮತಿಯನ್ನು ಹೇಳಿದರು:</verse>
				<verse number="5">“ಒಬ್ಬ ರೈತನು ಬಿತ್ತುವುದಕ್ಕೆ ಹೋದನು. ಬಿತ್ತನೆ ಮಾಡುತ್ತಿದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಅವು ಕಾಲ್ತುಳಿತಕ್ಕೆ ಸಿಕ್ಕಿಹೋದವು. ಅವುಗಳನ್ನು ಆಕಾಶದ ಪಕ್ಷಿಗಳು ತಿಂದುಬಿಟ್ಟವು.</verse>
				<verse number="6">ಮತ್ತೆ ಕೆಲವು ಬೀಜಗಳು ಕಲ್ಲುಭೂಮಿಯ ಮೇಲೆ ಬಿದ್ದವು. ಅವು ಮೊಳೆತಾಗಲೂ ತೇವವಿಲ್ಲದ ಕಾರಣ ಒಣಗಿಹೋದವು.</verse>
				<verse number="7">ಇನ್ನೂ ಕೆಲವು ಮುಳ್ಳು ಪೊದೆಗಳ ನಡುವೆ ಬಿದ್ದವು. ಮುಳ್ಳುಪೊದೆಗಳು ಅವುಗಳೊಡನೆ ಬೆಳೆದು ಸಸಿಗಳನ್ನು ಅದುಮಿಬಿಟ್ಟವು.</verse>
				<verse number="8">ಇನ್ನೂ ಕೆಲವು ಬೀಜಗಳು ಹದವಾದ ಭೂಮಿಯಲ್ಲಿ ಬಿದ್ದವು. ಅವು ಬೆಳೆದು ನೂರ್ಮಡಿ ಫಸಲನ್ನು ಕೊಟ್ಟವು.” ಈ ಸಾಮತಿಯನ್ನು ಮುಗಿಸಿದ ಮೇಲೆ ಯೇಸು, “ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ,” ಎಂದು ಒತ್ತಿ ಹೇಳಿದರು.</verse>
				<verse number="9">ಶಿಷ್ಯರು, ‘ಈ ಸಾಮತಿಯ ಅರ್ಥವೇನು?’ ಎಂದು ಕೇಳಿದಾಗ, ಯೇಸು ಇಂತೆಂದರು:</verse>
				<verse number="10">ದೇವರ ಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶವನ್ನು ನಿಮಗೆ ಕೊಡಲಾಗಿದೆ. ಬೇರೆಯವರಿಗಾದರೋ ಅವು ಸಾಮತಿಗಳ ರೂಪದಲ್ಲಿ ಮರೆಯಾಗಿವೆ. ಅವರು ಕಣ್ಣಾರೆ ನೋಡಿದರೂ ಕಾಣರು, ಕಿವಿಯಾರೆ ಕೇಳಿದರೂ ಗ್ರಹಿಸರು.”</verse>
				<verse number="11">“ಸಾಮತಿಯ ಅರ್ಥ ಹೀಗಿದೆ: ಬೀಜ ಎಂದರೆ ದೇವರ ವಾಕ್ಯ.</verse>
				<verse number="12">ಕಾಲ್ದಾರಿಯಲ್ಲಿ ಬಿದ್ದ ಬೀಜಗಳು ಎಂದರೆ ಆ ವಾಕ್ಯವನ್ನು ಕೇಳಿದವರು. ಆದರೆ ಅವರು ವಿಶ್ವಾಸಿಸಿ ಜೀವೋದ್ಧಾರವನ್ನು ಪಡೆಯದಂತೆ ಪಿಶಾಚಿ ಬಂದು ಆ ವಾಕ್ಯವನ್ನು ಅವರ ಹೃದಯದಿಂದ ಕೂಡಲೇ ತೆಗೆದುಬಿಡುತ್ತದೆ.</verse>
				<verse number="13">ಕಲ್ಲುಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಸಂತೋಷದಿಂದ ಸ್ವೀಕರಿಸಿದವರು; ಅದು ಅವರಲ್ಲಿ ಬೇರೂರದ ಕಾರಣ ಅವರು ಸ್ವಲ್ಪಕಾಲ ವಿಶ್ವಾಸಿಸುತ್ತಾರೆ; ಶೋಧನೆಯ ಸಮಯದಲ್ಲಿ ಅದನ್ನು ತೊರೆದುಬಿಡುತ್ತಾರೆ.</verse>
				<verse number="14">ಮುಳ್ಳು ಪೊದೆಗಳ ನಡುವೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿದ ಇನ್ನಿತರರು. ಆದರೆ ಕಾಲಕ್ರಮೇಣ ಬಾಳಿನ ಬವಣೆಗಳು, ಐಶ್ವರ್ಯದ ವ್ಯಾಮೋಹಗಳು ಹಾಗೂ ಸುಖಭೋಗಗಳು ಇವರನ್ನು ಅದುಮಿಬಿಡುತ್ತವೆ; ಇವರ ಫಲ ಪಕ್ವವಾಗುವುದಿಲ್ಲ.</verse>
				<verse number="15">ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲ ತರುವವರು.”</verse>
				<verse number="16">“ದೀಪವನ್ನು ಹಚ್ಚಿ ಯಾರೂ ಅದನ್ನು ಪಾತ್ರೆಯಿಂದ ಮುಚ್ಚಿಡುವುದಿಲ್ಲ; ಮಂಚದ ಕೆಳಗೆ ಬಚ್ಚಿಡುವುದಿಲ್ಲ. ಮನೆಯೊಳಕ್ಕೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲಿಡುತ್ತಾರೆ.</verse>
				<verse number="17">ಬಟ್ಟಬಯಲಾಗದ ಮುಚ್ಚುಮರೆಯಿಲ್ಲ; ಬೆಳಕಿಗೆ ಬಾರದ ಹಾಗೂ ರಟ್ಟಾಗದ ಗುಟ್ಟಿಲ್ಲ.</verse>
				<verse number="18">“ಆದ್ದರಿಂದ ನೀವು ಕಿವಿಕೊಡುವಾಗ ಎಚ್ಚರಿಕೆಯಿಂದಿರಿ; ಏಕೆಂದರೆ, ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ, ಇಲ್ಲದವನಿಂದ ತನಗಿದೆ ಎಂದುಕೊಳ್ಳುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ,” ಎಂದರು.</verse>
				<verse number="19">ಯೇಸುಸ್ವಾಮಿಯ ತಾಯಿ ಹಾಗೂ ಸಹೋದರರು ಯೇಸು ಇದ್ದೆಡೆಗೆ ಬಂದರು. ಆದರೆ ಜನಸಂದಣಿಯ ನಿಮಿತ್ತ ಹತ್ತಿರಕ್ಕೆ ಬರಲಾಗಲಿಲ್ಲ.</verse>
				<verse number="20">ಯೇಸುವಿಗೆ, “ನಿಮ್ಮ ತಾಯಿಯು ಮತ್ತು ಸಹೋದರರು ನಿಮ್ಮನ್ನು ಕಾಣಬೇಕೆಂದು ಹೊರಗೆ ನಿಂತಿದ್ದಾರೆ,” ಎಂದು ತಿಳಿಸಲಾಯಿತು.</verse>
				<verse number="21">ಅದಕ್ಕೆ ಯೇಸು, “ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯುವವರೇ ನನಗೆ ತಾಯಿ ಮತ್ತು ಅಣ್ಣತಮ್ಮಂದಿರು,” ಎಂದರು.</verse>
				<verse number="22">ಒಂದು ದಿನ ಯೇಸುಸ್ವಾಮಿ ತಮ್ಮ ಶಿಷ್ಯರ ಸಂಗಡ ದೋಣಿಯನ್ನು ಹತ್ತಿ, “ಸರೋವರದ ಆಚೆಯ ದಡಕ್ಕೆ ಹೋಗೋಣ,” ಎಂದರು. ಅಂತೆಯೇ ಎಲ್ಲರೂ ಹೊರಟರು.</verse>
				<verse number="23">ದೋಣಿ ಸಾಗುತ್ತಿದ್ದಾಗ, ಯೇಸು ನಿದ್ರಾವಶರಾದರು. ಅಷ್ಟರಲ್ಲಿ ಸರೋವರದ ಮೇಲೆ ಬಿರುಗಾಳಿ ಎದ್ದಿತು. ದೋಣಿ ನೀರಿನಿಂದ ತುಂಬಿ ಅವರೆಲ್ಲರೂ ಅಪಾಯಕ್ಕೆ ಒಳಗಾದರು.</verse>
				<verse number="24">ಶಿಷ್ಯರು ಬಂದು ಯೇಸುವನ್ನು ಎಬ್ಬಿಸಿ, “ಸ್ವಾಮೀ, ಸ್ವಾಮೀ, ನಾವು ಸಾಯುತ್ತಿದ್ದೇವೆ,” ಎಂದರು. ಯೇಸು ಎಚ್ಚೆತ್ತು ಬಿರುಗಾಳಿಯನ್ನೂ ಭೋರ್ಗರೆಯುತ್ತಿದ್ದ ಅಲೆಗಳನ್ನೂ ಗದರಿಸಿದರು. ಅವು ಸ್ತಬ್ಧವಾದವು. ವಾತಾವರಣ ಶಾಂತವಾಯಿತು.</verse>
				<verse number="25">ಆಗ ಯೇಸು ಶಿಷ್ಯರಿಗೆ, “ಎಲ್ಲಿ ಹೋಯಿತು ನಿಮ್ಮ ವಿಶ್ವಾಸ?” ಎಂದು ಪ್ರಶ್ನಿಸಿದರು. ಶಿಷ್ಯರು ಭಯಭೀತರಾಗಿ, ‘ಗಾಳಿಗೂ ನೀರಿಗೂ ಆಜ್ಞೆಕೊಡುವ ಇವರು ಯಾರಿರಬಹುದು! ಅವು ಇವರು ಹೇಳಿದ ಹಾಗೆ ಕೇಳುತ್ತವೆಯಲ್ಲಾ!’ ಎಂದು ಸೋಜಿಗದಿಂದ ತಮ್ಮತಮ್ಮೊಳಗೇ ಮಾತನಾಡಿಕೊಂಡರು.</verse>
				<verse number="26">ಯೇಸುಸ್ವಾಮಿ ಮತ್ತು ಶಿಷ್ಯರು ದೋಣಿಯಲ್ಲೇ ಮುಂದೆ ಸಾಗಿ ಗಲಿಲೇಯಕ್ಕೆ ಎದುರಾಗಿದ್ದ ಗೆರಸೇನರ ನಾಡಿಗೆ ಬಂದು ಸೇರಿದರು.</verse>
				<verse number="27">ಯೇಸು ದಡದ ಮೇಲೆ ಕಾಲಿಟ್ಟದ್ದೇ ತಡ, ಆ ಊರಿನವನೊಬ್ಬನು ಬಂದು ಅವರನ್ನು ಎದುರುಗೊಂಡನು. ಅವನಿಗೆ ಪಿಶಾಚಿ ಹಿಡಿದಿತ್ತು. ಅವನು ಬಟ್ಟೆತೊಟ್ಟು ಬಹಳ ದಿನಗಳಾಗಿತ್ತು; ಮನೆ ಬಿಟ್ಟು ಸಮಾಧಿಗಳ ಗುಹೆಗಳಲ್ಲೇ ವಾಸಿಸುತ್ತಿದ್ದನು.</verse>
				<verse number="28">ಯೇಸುವನ್ನು ಕಂಡೊಡನೆ ಗಟ್ಟಿಯಾಗಿ ಕೂಗುತ್ತಾ ಅವರ ಮುಂದೆ ಅಡ್ಡಬಿದ್ದು, “ಯೇಸುವೇ, ಪರಾತ್ಪರ ದೇವರ ಪುತ್ರರೇ, ನಿಮಗೇಕೆ ನನ್ನ ಗೊಡವೆ? ದಯವಿಟ್ಟು ನನ್ನನ್ನು ಪೀಡಿಸಬೇಡಿ,” ಎಂದು ದನಿಯೆತ್ತಿ ಬೇಡಿಕೊಂಡನು.</verse>
				<verse number="29">ಕಾರಣ - ಅವನನ್ನು ಬಿಟ್ಟು ತೊಲಗಬೇಕೆಂದು ಯೇಸು ದೆವ್ವಕ್ಕೆ ಆಗಲೆ ಕಟ್ಟಪ್ಪಣೆ ಮಾಡಿದ್ದರು. ಎಷ್ಟೋ ಸಾರಿ ಅದು ಅವನ ಮೇಲೆ ಬಂದಿತ್ತು. ಜನರು ಅವನನ್ನು ಸರಪಳಿ ಸಂಕೋಲೆಗಳಿಂದ ಬಂಧಿಸಿ ಕಾವಲಿನಲ್ಲಿ ಇಟ್ಟಿದ್ದರೂ ಅವುಗಳನ್ನು ಅವನು ಮುರಿದುಹಾಕುತ್ತಿದ್ದನು; ದೆವ್ವ ಅವನನ್ನು ಬೆಂಗಾಡಿಗೆ ಅಟ್ಟುತ್ತಿತ್ತು.</verse>
				<verse number="30">ಯೇಸು, “ನಿನ್ನ ಹೆಸರೇನು?” ಎಂದು ಕೇಳಲು, ಅವನು “ಗಣ\, ಎಂದು ಉತ್ತರಕೊಟ್ಟನು; ಏಕೆಂದರೆ, ಅನೇಕ ಪಿಶಾಚಿಗಳು ಅವನನ್ನು ಹೊಕ್ಕಿದ್ದವು.</verse>
				<verse number="31">ಆ ಪಿಶಾಚಿಗಳು, “ಪಾತಾಳಕ್ಕೆ ಹೋಗಿಬೀಳಿರೆಂದು ನಮಗೆ ಆಜ್ಞೆಮಾಡಬೇಡಿ,” ಎಂದು ಯೇಸುವನ್ನು ಬೇಡಿಕೊಂಡವು.</verse>
				<verse number="32">ಸಮೀಪದಲ್ಲೇ, ಹಂದಿಗಳ ದೊಡ್ಡ ಹಿಂಡೊಂದು ಬೆಟ್ಟದ ತಪ್ಪಲಿನಲ್ಲಿ ಮೇಯುತ್ತಿತ್ತು. ಆ ಹಂದಿಗಳೊಳಗೆ ಸೇರಿಕೊಳ್ಳಲು ತಮಗೆ ಅಪ್ಪಣೆಯಾಗಬೇಕೆಂದು ಆ ಪಿಶಾಚಿಗಳು ಯೇಸುವನ್ನು ಬೇಡಿಕೊಂಡವು. ಅವರು ಹಾಗೇ ಅಪ್ಪಣೆಮಾಡಿದರು.</verse>
				<verse number="33">ಕೂಡಲೆ ಪಿಶಾಚಿಗಳು ಆ ವ್ಯಕ್ತಿಯಿಂದ ಹೊರಬಂದು ಹಂದಿಗಳೊಳಗೆ ಹೊಕ್ಕವು. ಇದರ ಪರಿಣಾಮವಾಗಿ ಆ ಹಂದಿಗಳ ಹಿಂಡು ಬೆಟ್ಟದ ಕಡಿದಾದ ಬದಿಯಿಂದ ಧಾವಿಸಿ ಸರೋವರಕ್ಕೆ ಬಿದ್ದು ನೀರುಪಾಲಾಯಿತು.</verse>
				<verse number="34">ಇದನ್ನು ನೋಡಿದೊಡನೆಯೇ, ಹಂದಿ ಮೇಯಿಸುತ್ತಿದ್ದವರು ಓಡಿಹೋಗಿ ನಡೆದ ಈ ಘಟನೆಯನ್ನು ಪಟ್ಟಣದಲ್ಲೂ ಹಳ್ಳಿಯಲ್ಲೂ ತಿಳಿಸಿದರು.</verse>
				<verse number="35">ಅದನ್ನು ನೋಡಲು ಜನರು ಹೊರಟು ಯೇಸುವಿನ ಬಳಿಗೆ ಬಂದರು. ಪಿಶಾಚಿಗಳಿಂದ ಬಿಡುಗಡೆಯಾಗಿದ್ದ ಆ ವ್ಯಕ್ತಿ ಬಟ್ಟೆಯನ್ನು ತೊಟ್ಟುಕೊಂಡು, ಸ್ವಸ್ಥಬುದ್ಧಿಯುಳ್ಳವನಾಗಿ, ಯೇಸುವಿನ ಪಾದಗಳ ಬಳಿ ಕುಳಿತಿದ್ದನ್ನು ಅವರೆಲ್ಲರೂ ಕಂಡು ಗಾಬರಿಗೊಂಡರು.</verse>
				<verse number="36">ಆಗ, ನಡೆದುದ್ದನ್ನು ಕಣ್ಣಾರೆ ಕಂಡವರು ಪಿಶಾಚಿಗಳಿಂದ ಪೀಡಿತನಾಗಿದ್ದವನು ಬಿಡುಗಡೆಯಾದ ಬಗೆಯನ್ನು ವಿವರಿಸಿದರು.</verse>
				<verse number="37">ಬಹಳವಾಗಿ ದಿಗಿಲುಗೊಂಡಿದ್ದ ಗೇರಸೇನಿನ ಹಾಗೂ ಸುತ್ತಮುತ್ತಲಿನ ಜನರೆಲ್ಲರೂ ತಮ್ಮನ್ನು ಬಿಟ್ಟುಹೋಗಬೇಕೆಂದು ಯೇಸುವನ್ನು ಕೇಳಿಕೊಂಡರು. ಯೇಸು ದೋಣಿ ಹತ್ತಿ ಹಿಂದಿರುಗಿದರು.</verse>
				<verse number="38">ಪಿಶಾಚಿಗಳಿಂದ ಬಿಡುಗಡೆ ಆಗಿದ್ದ ಆ ವ್ಯಕ್ತಿಯಾದರೋ, “ನನ್ನನ್ನು ನಿಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗಿ,” ಎಂದು ಬಿನ್ನವಿಸಿಕೊಂಡನು.</verse>
				<verse number="39">ಆದರೆ ಯೇಸು, “ನಿನ್ನ ಮನೆಗೆ ಹಿಂದಿರುಗಿಹೋಗು, ದೇವರು ನಿನಗೆ ಎಂಥಾ ಉಪಕಾರ ಮಾಡಿದ್ದಾರೆಂಬುದನ್ನು ಪ್ರಕಟಿಸು,” ಎಂದು ಅವನನ್ನು ಬೀಳ್ಕೊಟ್ಟರು. ಅವನು ಹೋಗಿ, ಯೇಸು ತನಗೆ ಮಾಡಿದ ಮಹದುಪಕಾರವನ್ನು ಊರಿನಲ್ಲೆಲ್ಲಾ ಪ್ರಚಾರಮಾಡಿದನು.</verse>
				<verse number="40">ಯೇಸುಸ್ವಾಮಿ ಹಿಂದಿರುಗಿ ಬಂದುದೇ, ದಡದಲ್ಲಿ ಎದುರುನೋಡುತ್ತಿದ್ದ ಜನಸಮೂಹವು ಅವರನ್ನು ಸ್ವಾಗತಿಸಿತು.</verse>
				<verse number="41">ಅಷ್ಟರಲ್ಲಿ ಪ್ರಾರ್ಥನಾಮಂದಿರದ ಅಧಿಕಾರಿ ಯಾಯೀರನೆಂಬವನು ಅಲ್ಲಿಗೆ ಬಂದು, ಯೇಸುವಿನ ಪಾದಕ್ಕೆರಗಿ, ತನ್ನ ಮನೆಗೆ ಬರಬೇಕೆಂದು ವಿನಂತಿಸಿದನು</verse>
				<verse number="42">ಕಾರಣ - ಸುಮಾರು ಹನ್ನೆರಡು ವರ್ಷ ವಯಸ್ಸಿನ ಅವನ ಏಕೈಕ ಪುತ್ರಿ ಮರಣಾವಸ್ಥೆಯಲ್ಲಿದ್ದಳು. ಯೇಸು ಹೊರಟುಬರುವಾಗ ಜನರ ಗುಂಪು ಅವರನ್ನು ಸುತ್ತಲೂ ಒತ್ತರಿಸುತ್ತಿತ್ತು.</verse>
				<verse number="43">ಹನ್ನೆರಡು ವರ್ಷಗಳಿಂದಲೂ ರಕ್ತಸ್ರಾವ ರೋಗದಿಂದ ನರಳುತ್ತಾ ಇದ್ದ ಮಹಿಳೆಯೊಬ್ಬಳು ಆ ಗುಂಪಿನಲ್ಲಿ ಇದ್ದಳು. ಆಕೆ ತನ್ನ ಆಸ್ತಿಪಾಸ್ತಿಯನ್ನೆಲ್ಲಾ ವೈದ್ಯರಿಗೆ ವೆಚ್ಚಮಾಡಿದ್ದರೂ ಆಕೆಯನ್ನು ಗುಣಪಡಿಸಲು ಯಾರಿಂದಲೂ ಸಾಧ್ಯವಾಗಿರಲಿಲ್ಲ.</verse>
				<verse number="44">ಆಕೆ ಹಿಂಬದಿಯಿಂದ ಬಂದು ಯೇಸುಸ್ವಾಮಿಯ ಉಡುಪಿನ ಅಂಚನ್ನು ಮುಟ್ಟಿದಳು. ಆ ಕ್ಷಣವೇ ಅವಳ ರಕ್ತಸ್ರಾವವು ನಿಂತುಹೋಯಿತು.</verse>
				<verse number="45">ಆಗ ಯೇಸು, “ನನ್ನನ್ನು ಮುಟ್ಟಿದವರು ಯಾರು?” ಎಂದು ಕೇಳಿದರು. ಯಾರೂ ಮುಟ್ಟಲಿಲ್ಲವೆಂದು ಎಲ್ಲರು ಹೇಳುತ್ತಿರಲು ಪೇತ್ರನು, “ಪ್ರಭೂ, ಇಷ್ಟೊಂದು ಜನರು ಮೇಲೆ ಮೇಲೆ ಬೀಳುತ್ತಾ ನಿಮ್ಮನ್ನು ಒತ್ತರಿಸುತ್ತಿದ್ದಾರಲ್ಲಾ,” ಎಂದನು.</verse>
				<verse number="46">ಅದಕ್ಕೆ ಯೇಸು, “ಯಾರೋ ನನ್ನನ್ನು ಮುಟ್ಟಿದ್ದಾರೆ. ಗುಣಪಡಿಸುವ ಶಕ್ತಿ ನನ್ನಿಂದ ಹೊರಹೊಮ್ಮಿದೆ ಎಂದು ನನಗೆ ಗೊತ್ತು,” ಎಂದರು.</verse>
				<verse number="47">ಆಗ ಆ ಮಹಿಳೆ ತಾನು ಮಾಡಿದ್ದನ್ನು ಇನ್ನು ಮುಚ್ಚಿಡಲು ಸಾಧ್ಯವಿಲ್ಲವೆಂದು ಅರಿತು, ನಡುಗುತ್ತಾ ಬಂದು, ಯೇಸುವಿಗೆ ಅಡ್ಡಬಿದ್ದಳು. ತಾನು ಮುಟ್ಟಿದ್ದಕ್ಕೆಕಾರಣವನ್ನೂ ತಾನು ತಕ್ಷಣ ಗುಣಹೊಂದಿದ್ದನ್ನೂ ಎಲ್ಲರ ಮುಂದೆ ಬಹಿರಂಗಪಡಿಸಿದಳು.</verse>
				<verse number="48">ಯೇಸು ಆಕೆಗೆ, “ಮಗಳೇ, ನಿನ್ನ ವಿಶ್ವಾಸ ನಿನ್ನನ್ನು ಗುಣಪಡಿಸಿದೆ; ಸಮಾಧಾನದಿಂದ ಹೋಗು,” ಎಂದರು.</verse>
				<verse number="49">ಯೇಸುಸ್ವಾಮಿ ಇನ್ನೂ ಮಾತನಾಡುತ್ತಾ ಇರುವಾಗಲೇ ಒಬ್ಬನು ಯಾಯೀರನ ಮನೆಯಿಂದ ಬಂದು ಆ ಯಾಯಿರನಿಗೆ, “ನಿಮ್ಮ ಮಗಳು ತೀರಿಹೋದಳು. ಇನ್ನು ಗುರುವಿಗೆ ತೊಂದರೆಕೊಡಬೇಡಿ,” ಎಂದನು.</verse>
				<verse number="50">ಇದನ್ನು ಕೇಳಿದ ಯೇಸು ಯಾಯೀರನಿಗೆ, “ಭಯಪಡಬೇಡ, ನಿನ್ನಲ್ಲಿ ವಿಶ್ವಾಸವೊಂದಿದ್ದರೆ ಸಾಕು, ನಿನ್ನ ಮಗಳು ಬದುಕುವಳು,” ಎಂದರು.</verse>
				<verse number="51">ಯೇಸು ಅವನ ಮನೆಯನ್ನು ಸೇರಿದುದೇ, ಪೇತ್ರ, ಯೊವಾನ್ನ ಹಾಗೂ ಯಕೋಬ ಮತ್ತು ಆ ಬಾಲಕಿಯ ತಂದೆತಾಯಿ ಇವರ ಹೊರತು ಯಾರನ್ನೂ ತನ್ನೊಡನೆ ಒಳಕ್ಕೆ ಬರಗೊಡಲಿಲ್ಲ.</verse>
				<verse number="52">ಇತ್ತ, ಸತ್ತ ಬಾಲಕಿಗಾಗಿ ಎಲ್ಲರೂ ಅತ್ತು ಗೋಳಾಡುತ್ತಾ ಇದ್ದರು. ಯೇಸುವಾದರೋ, “ಅಳಬೇಡಿ, ಅವಳು ಸತ್ತಿಲ್ಲ, ನಿದ್ರಿಸುತ್ತಿದ್ದಾಳೆ,” ಎಂದರು.</verse>
				<verse number="53">ಬಾಲಕಿ ಸತ್ತುಹೋಗಿರುವುದನ್ನು ಅರಿತಿದ್ದ ಜನರು ಯೇಸುವನ್ನು ಪರಿಹಾಸ್ಯ ಮಾಡತೊಡಗಿದರು.</verse>
				<verse number="54">ಯೇಸು ಅವಳ ಕೈಹಿಡಿದು, “ಮಗೂ, ಎದ್ದೇಳು,” ಎಂದು ಕೂಗಿ ಹೇಳಿದರು.</verse>
				<verse number="55">ಬಾಲಕಿಗೆ ಜೀವ ಮರಳಿಬಂತು. ತಕ್ಷಣವೇ ಅವಳು ಎದ್ದಳು. ತಿನ್ನಲು ಏನನ್ನಾದರೂ ಅವಳಿಗೆ ಕೊಡಬೇಕೆಂದು ಯೇಸು ಸೂಚಿಸಿದರು.</verse>
				<verse number="56">ಬಾಲಕಿಯ ತಂದೆತಾಯಿಗಳು ಆಶ್ಚರ್ಯಚಕಿತರಾದರು. ಆಗ ಯೇಸು ನಡೆದ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಅವರಿಗೆ ಆಜ್ಞಾಪಿಸಿದರು.</verse>
			</chapter>
			<chapter number="9">
				<verse number="1">ಯೇಸುಸ್ವಾಮಿ ಹನ್ನೆರಡು ಮಂದಿ ಪ್ರೇಷಿತರನ್ನು ಒಟ್ಟಿಗೆ ಕರೆದು ಎಲ್ಲ ದೆವ್ವಗಳನ್ನು ಬಿಡಿಸಲೂ ರೋಗ ನಿವಾರಣೆಮಾಡಲೂ ಅವರಿಗೆ‍ ಶಕ್ತಿಯನ್ನು ಮತ್ತು ಅಧಿಕಾರವನ್ನು ಕೊಟ್ಟರು.</verse>
				<verse number="2">ಅನಂತರ ದೇವರ ಸಾಮ್ರಾಜ್ಯವನ್ನು ಕುರಿತು ಬೋಧಿಸುವುದಕ್ಕೂ ರೋಗಿಗಳನ್ನು ಗುಣಪಡಿಸುವುದಕ್ಕೂ ಅವರನ್ನು ಕಳುಹಿಸಿದರು.</verse>
				<verse number="3">ಕಳುಹಿಸುವಾಗ ಅವರಿಗೆ ಇಂತೆಂದರು, “ಪ್ರಯಾಣಕ್ಕೆಂದು ಏನನ್ನೂ ತೆಗೆದುಕೊಳ್ಳಬೇಡಿ; ದಂಡ, ಜೋಳಿಗೆ, ಬುತ್ತಿ ಅಥವಾ ಹಣ ಯಾವುದೂ ಬೇಡ. ಎರಡು ಅಂಗಿಗಳೂ ಬೇಕಾಗಿಲ್ಲ.</verse>
				<verse number="4">ಯಾವ ಮನೆಯವರು ನಿಮ್ಮನ್ನು ಬರಮಾಡಿಕೊಳ್ಳುತ್ತಾರೋ ಆ ಮನೆಯಲ್ಲೇ ತಂಗಿರಿ. ಅಲ್ಲಿಂದಲೇ ಮುಂದಕ್ಕೆ ಸಾಗಿರಿ.</verse>
				<verse number="5">ಯಾವ ಊರಿನವರಾದರೂ ನಿಮ್ಮನ್ನು ಸ್ವಾಗತಿಸದೆಹೋದಲ್ಲಿ, ನೀವು ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ,” ಎಂದರು.</verse>
				<verse number="6">ಪ್ರೇಷಿತರು ಹೊರಟು ಹಳ್ಳಿಹಳ್ಳಿಗೂ ಹೋಗಿ ಎಲ್ಲ ಕಡೆ ಶುಭಸಂದೇಶವನ್ನು ಬೋಧಿಸಿದರು; ರೋಗಿಗಳನ್ನು ಗುಣಪಡಿಸಿದರು.</verse>
				<verse number="7">ನಡೆಯುತ್ತಿದ್ದ ಎಲ್ಲ ಸಂಗತಿಗಳು ಸಾಮಂತರಾಜ ಹೆರೋದನ ಕಿವಿಗೆ ಬಿದ್ದುವು. ಅವನ ಮನಸ್ಸು ಕಳವಳಗೊಂಡಿತ್ತು. ಏಕೆಂದರೆ, ‘ಯೊವಾನ್ನನು ಮರಳಿ ಜೀವಂತನಾಗಿ ಎದ್ದಿದ್ದಾನೆ’ ಎಂದು ಕೆಲವರೂ</verse>
				<verse number="8">‘ಎಲೀಯನು ಪುನಃ ಕಾಣಿಸಿಕೊಂಡಿದ್ದಾನೆ’, ಎಂದು ಇನ್ನು ಕೆಲವರೂ ‘ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತನಾಗಿದ್ದಾನೆ,’ ಎಂದು ಮತ್ತೆ ಕೆಲವರೂ ಹೇಳುತ್ತಿದ್ದರು.</verse>
				<verse number="9">ಹೆರೋದನಾದರೋ, ‘ಯೊವಾನ್ನನೇ! ಅವನನ್ನು ನಾನೇ ಶಿರಚ್ಛೇದನ ಮಾಡಿಸಿದೆನಲ್ಲಾ; ಮತ್ತೆ ಇವನಾರು? ಇವನ ಬಗ್ಗೆ ಇಂಥಾ ವಿಷಯಗಳನ್ನೆಲ್ಲ ಕೇಳುತ್ತಾ ಇರುವೆನಲ್ಲಾ!’ ಎಂದುಕೊಂಡು, ಯೇಸುವನ್ನು ನೋಡಲು ಅವಕಾಶ ಹುಡುಕುತ್ತಿದ್ದನು.</verse>
				<verse number="10">ಇತ್ತ ಪ್ರೇಷಿತರು ಹಿಂದಿರುಗಿ ಬಂದು ತಾವು ಮಾಡಿದ್ದೆಲ್ಲವನ್ನೂ ಯೇಸುಸ್ವಾಮಿಗೆ ವರದಿಮಾಡಿದರು. ಯೇಸು ಅವರನ್ನು ಪ್ರತ್ಯೇಕವಾಗಿ ಕರೆದುಕೊಂಡು ಬೆತ್ಸಾಯಿದ ಎಂಬ ಊರಿನತ್ತ ಹೋದರು.</verse>
				<verse number="11">ಇದನ್ನು ತಿಳಿದುಕೊಂಡು ಜನಸಮೂಹ ಅವರನ್ನು ಹಿಂಬಾಲಿಸಿತು. ಯೇಸು ಅವರನ್ನು ಸ್ವಾಗತಿಸಿ, ದೇವರ ಸಾಮ್ರಾಜ್ಯದ ವಿಷಯವಾಗಿ ಹೇಳಿ, ಅಗತ್ಯವಿದ್ದವರಿಗೆ ಆರೋಗ್ಯದಾನ ಮಾಡಿದರು.</verse>
				<verse number="12">ಅಷ್ಟರಲ್ಲಿ ಸಾಯಂಕಾಲವಾಗುತ್ತಾ ಬಂದಿತು. ಹನ್ನೆರಡು ಮಂದಿ ಪ್ರೇಷಿತರು ಯೇಸುವಿನ ಬಳಿಗೆ ಬಂದು, “ಇದು ನಿರ್ಜನ ಪ್ರದೇಶ, ಜನರನ್ನು ಕಳುಹಿಸಿಬಿಡಿ; ಅವರು ಸಮೀಪದ ಊರುಕೇರಿಗಳಿಗೆ ಹೋಗಿ ಊಟವಸತಿಯನ್ನು ಒದಗಿಸಿಕೊಳ್ಳಲಿ,” ಎಂದರು.</verse>
				<verse number="13">ಅದಕ್ಕೆ ಯೇಸು, “ನೀವೇ ಅವರಿಗೆ ಊಟಕ್ಕೆ ಏನಾದರು ಕೊಡಿ,” ಎಂದರು. ಅವರು, “ನಮ್ಮಲ್ಲಿರುವುದು ಐದು ರೊಟ್ಟಿ ಮತ್ತು ಎರಡು ಮೀನು ಮಾತ್ರ; ನಾವು ಹೋಗಿ ಇವರೆಲ್ಲರಿಗೆ ಬೇಕಾಗುವಷ್ಟು ಊಟ ಕೊಂಡುಕೊಂಡು ಬರಬೇಕೆ?” ಎಂದರು.</verse>
				<verse number="14">ಏಕೆಂದರೆ ಅಲ್ಲಿ ಗಂಡಸರೇ ಸುಮಾರು ಐದು ಸಾವಿರಮಂದಿ ಇದ್ದರು. ಆಗ ಯೇಸು ಶಿಷ್ಯರಿಗೆ, “ಇವರನ್ನು ಐವತ್ತು ಐವತ್ತರಂತೆ ಪಂಕ್ತಿಯಾಗಿ ಕೂರಿಸಿರಿ,” ಎಂದು ಹೇಳಲು,</verse>
				<verse number="15">ಅವರು ಹಾಗೆಯೇ ಎಲ್ಲರನ್ನು ಕುಳ್ಳಿರಿಸಿದರು.</verse>
				<verse number="16">ಅನಂತರ ಯೇಸು ಆ ಐದು ರೊಟ್ಟಿಗಳನ್ನೂ ಎರಡು ಮೀನುಗಳನ್ನೂ ತೆಗೆದುಕೊಂಡು ಸ್ವರ್ಗದತ್ತ ಕಣ್ಣೆತ್ತಿ ನೋಡಿ, ದೇವರಿಗೆ ಸ್ತೋತ್ರಸಲ್ಲಿಸಿದರು. ತರುವಾಯ ಅವುಗಳನ್ನು ಮುರಿದು ಜನಸಮೂಹಕ್ಕೆ ಬಡಿಸುವಂತೆ ಶಿಷ್ಯರಿಗೆ ಕೊಟ್ಟರು.</verse>
				<verse number="17">ಎಲ್ಲರೂ ಹೊಟ್ಟೆ ತುಂಬ ತಿಂದು ಸಂತೃಪ್ತರಾದರು. ಇನ್ನು ಉಳಿದಿದ್ದ ತುಂಡುಗಳನ್ನು ಒಟ್ಟುಗೂಡಿಸಿದಾಗ ಅವು ಹನ್ನೆರಡು ಬುಟ್ಟಿ ತುಂಬ ಆದುವು.</verse>
				<verse number="18">ಒಮ್ಮೆ ಯೇಸುಸ್ವಾಮಿ ಏಕಾಂಗಿಯಾಗಿ ಪ್ರಾರ್ಥನೆ ಮಾಡುತ್ತಿದ್ದಾಗ ಶಿಷ್ಯರು ಸಮೀಪದಲ್ಲೇ ಇದ್ದರು. “ಜನಸಾಮಾನ್ಯರು ನನ್ನನ್ನು ಯಾರೆನ್ನುತ್ತಾರೆ?” ಎಂದು ಯೇಸು ಅವರನ್ನು ಪ್ರಶ್ನಿಸಿದರು.</verse>
				<verse number="19">ಅದಕ್ಕೆ ಅವರು, “ಹಲವರು ತಮ್ಮನ್ನು ‘ಸ್ನಾನಿಕ ಯೊವಾನ್ನ’ ಎನ್ನುತ್ತಾರೆ; ಕೆಲವರು ‘ಎಲೀಯನು’ ಎನ್ನುತ್ತಾರೆ; ಮತ್ತೆ ಕೆಲವರು ‘ಪ್ರಾಚೀನ ಪ್ರವಾದಿಗಳಲ್ಲಿ ಒಬ್ಬನು ಮರಳಿ ಜೀವಂತನಾಗಿದ್ದಾನೆ’ ಎನ್ನುತ್ತಾರೆ,” ಎಂದು ಉತ್ತರವಿತ್ತರು.</verse>
				<verse number="20">ಆಗ ಯೇಸು, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಪುನಃ ಪ್ರಶ್ನಿಸಿದರು. ಅದಕ್ಕೆ ಪೇತ್ರನು, “ದೇವರಿಂದ ಅಭಿಷಿಕ್ತರಾದ ಲೋಕೋದ್ಧಾರಕ ತಾವೇ\ ಎಂದು ಉತ್ತರ ಕೊಟ್ಟನು.</verse>
				<verse number="21">ಈ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಯೇಸು ಶಿಷ್ಯರನ್ನು ಆಜ್ಞಾಪೂರ್ವಕವಾಗಿ ಎಚ್ಚರಿಸಿದರು.</verse>
				<verse number="22">ಇದಲ್ಲದೆ, “ನರಪುತ್ರನು ಕಠಿಣವಾದ ಯಾತನೆಯನ್ನು ಅನುಭವಿಸಬೇಕಾಗಿದೆ. ಸಭಾಪ್ರಮುಖರಿಂದಲೂ ಮುಖ್ಯಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ಆತನು ತಿರಸ್ಕೃತನಾಗಿ ಕೊಲ್ಲಲ್ಪಡುವನು. ಆದರೆ ಮೂರನೇ ದಿನ ಆತನು ಪುನರುತ್ಥಾನ ಹೊಂದುವನು,\ ಎಂದು ಅವರಿಗೆ ತಿಳಿಸಿದರು.</verse>
				<verse number="23">ಯೇಸುಸ್ವಾಮಿ ಎಲ್ಲರನ್ನು ನೋಡಿ ಹೇಳಿದ್ದೇನೆಂದರೆ: “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ, ಅವನು ತನ್ನನ್ನು ತಾನೇ ಪರಿತ್ಯಜಿಸಿ, ತನ್ನ ಶಿಲುಬೆಯನ್ನು ಅನುದಿನವೂ ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.</verse>
				<verse number="24">ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಹಾತೊರೆಯುವವನು ಅದನ್ನು ಕಳೆದುಕೊಳ್ಳುವನು. ಆದರೆ ನನ್ನ ನಿಮಿತ್ತ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ನಿತ್ಯಕ್ಕೂ ಉಳಿಸಿಕೊಳ್ಳುವನು.</verse>
				<verse number="25">ಒಬ್ಬನು ಪ್ರಪಂಚವನ್ನೆಲ್ಲಾ ಗೆದ್ದುಕೊಂಡು ತನ್ನ ಪ್ರಾಣವನ್ನೇ ಕಳೆದುಕೊಂಡರೆ ಅಥವಾ ತೆತ್ತರೆ ಅವನಿಗೆ ಅದರಿಂದ ಬರುವ ಲಾಭವಾದರೂ ಏನು?</verse>
				<verse number="26">ಯಾರು ನನ್ನನ್ನೂ ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುತ್ತಾರೋ, ಅಂಥವರನ್ನು ಕುರಿತು ನರಪುತ್ರನು ಸಹ, ತನ್ನ ಪಿತನ ಹಾಗೂ ದೇವದೂತರ ಪ್ರಭಾವದೊಡನೆ ಬರುವಾಗ, ನಾಚಿಕೆಪಡುವನು.</verse>
				<verse number="27">“ಇಲ್ಲಿರುವವರಲ್ಲಿ ಕೆಲವರು, ದೇವರ ಸಾಮ್ರಾಜ್ಯವನ್ನು ನೋಡದೆ ಸಾವನ್ನು ಸವಿಯುವುದಿಲ್ಲವೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.</verse>
				<verse number="28">ಇದನ್ನೆಲ್ಲ ಹೇಳಿ ಸುಮಾರು ಎಂಟು ದಿನಗಳಾದ ಬಳಿಕ ಪೇತ್ರ, ಯೊವಾನ್ನ ಮತ್ತು ಯಕೋಬ ಇವರನ್ನು ತಮ್ಮೊಡನೆ ಕರೆದುಕೊಂಡು ಯೇಸುಸ್ವಾಮಿ ಪ್ರಾರ್ಥನೆಮಾಡಲು ಬೆಟ್ಟವನ್ನು ಹತ್ತಿದರು.</verse>
				<verse number="29">ಪ್ರಾರ್ಥನೆಮಾಡುವ ಸಮಯದಲ್ಲಿ ಯೇಸುವಿನ ಮುಖಚರ್ಯೆಯು ಮಾರ್ಪಟ್ಟಿತು. ಅವರ ಉಡುಪು ಬೆಳ್ಳಗೆ ಪ್ರಜ್ವಲಿಸಿತು.</verse>
				<verse number="30">ಇದ್ದಕ್ಕಿದ್ದ ಹಾಗೆ ಮೋಶೆ ಮತ್ತು ಎಲೀಯ ಎಂಬ ಇಬ್ಬರು ಪ್ರವಾದಿಗಳು ಅವರೊಡನೆ ಮಾತನಾಡುತ್ತಿದ್ದರು.</verse>
				<verse number="31">ದಿವ್ಯ ವೈಭವದಿಂದ ಕಂಗೊಳಿಸುತ್ತಿದ್ದ ಇವರಿಬ್ಬರು ಯೇಸು ಜೆರುಸಲೇಮಿನಲ್ಲಿ ಪ್ರಾಣತ್ಯಾಗಮಾಡಿ ದೈವೇಚ್ಛೆಯನ್ನು ನೆರವೇರಿಸಲಿದ್ದ ವಿಷಯವಾಗಿ ಸಂಭಾಷಿಸುತ್ತಿದ್ದರು.</verse>
				<verse number="32">ಗಾಢ ನಿದ್ರೆಯಲ್ಲಿದ್ದ ಪೇತ್ರ ಮತ್ತು ಸಂಗಡಿಗರು ಎಚ್ಚೆತ್ತಾಗ ಯೇಸುವಿನ ಮಹಿಮೆಯನ್ನೂ ಅವರೊಡನೆ ನಿಂತಿದ್ದ ಆ ಇಬ್ಬರನ್ನೂ ಕಂಡರು.</verse>
				<verse number="33">ಅವರಿಬ್ಬರೂ ಯೇಸುವನ್ನು ಬಿಟ್ಟುಹೋಗುತ್ತಿರುವಾಗ, ಪೇತ್ರನು ಯೇಸುವಿಗೆ, “ಗುರುದೇವಾ, ನಾವು ಇಲ್ಲೇ ಇರುವುದು ಒಳ್ಳೆಯದು; ಅಪ್ಪಣೆಯಾಗಲಿ, ಮೂರು ಗುಡಾರಗಳನ್ನು ಕಟ್ಟುವೆವು - ತಮಗೊಂದು, ಮೋಶೆಗೊಂದು ಮತ್ತು ಎಲೀಯನಿಗೊಂದು,” ಎಂದನು. ತಾನು ಏನು ಹೇಳುತ್ತಿರುವೆನೆಂದೇ ಪೇತ್ರನು ಗ್ರಹಿಸಲಿಲ್ಲ.</verse>
				<verse number="34">ಆತನು ಇದನ್ನು ಹೇಳುತ್ತಿದ್ದ ಹಾಗೆ ಮೇಘವೊಂದು ಬಂದು ಅವರನ್ನಾವರಿಸಿತು. ಆ ಮೇಘದಲ್ಲಿ ಅವರು ಅದೃಶ್ಯರಾದಾಗ ಶಿಷ್ಯರು ದಿಗಿಲುಗೊಂಡರು.</verse>
				<verse number="35">ಅದರೊಳಗಿಂದ, “ಈತನು ನನ್ನ ಪುತ್ರನು; ನಾನು ಆರಿಸಿಕೊಂಡವನು. ಈತನ ಮಾತಿಗೆ ಕಿವಿಗೊಡಿರಿ,” ಎಂಬ ವಾಣಿ ಕೇಳಿಸಿತು.</verse>
				<verse number="36">ಆ ವಾಣಿ ಆದಮೇಲೆ ಕಾಣಿಸಿಕೊಂಡವರು ಯೇಸು ಮಾತ್ರ. ಶಿಷ್ಯರು ತಾವು ನೋಡಿದ್ದನ್ನು ಕುರಿತು ಆ ದಿನಗಳಲ್ಲಿ ಏನನ್ನೂ ಹೇಳದೆ, ಯಾರಿಗೂ ತಿಳಿಸದೆ, ತತ್ಕಾಲ ಮೌನದಿಂದ ಇದ್ದರು.</verse>
				<verse number="37">ಮಾರನೇ ದಿನ ಯೇಸುಸ್ವಾಮಿ ಮತ್ತು ಮೂವರು ಶಿಷ್ಯರು ಬೆಟ್ಟದಿಂದ ಇಳಿದುಬಂದಾಗ, ದೊಡ್ಡ ಗುಂಪೊಂದು ಅವರನ್ನು ಎದುರುಗೊಂಡಿತು.</verse>
				<verse number="38">ಆ ಗುಂಪಿನಲ್ಲಿದ್ದ ಒಬ್ಬನು, “ಬೋಧಕರೇ, ನನ್ನ ಮಗನನ್ನು ಕಟಾಕ್ಷಿಸಿರಿ, ನನಗೆ ಇವನೊಬ್ಬನೇ ಮಗ.</verse>
				<verse number="39">ಇವನನ್ನು ದೆವ್ವ ಹಿಡಿಯುತ್ತದೆ. ಆಗ ಇದ್ದಕ್ಕಿದ್ದ ಹಾಗೆ ಕಿರುಚಿಕೊಳ್ಳುತ್ತಾನೆ; ವಿಲವಿಲನೆ ಒದ್ದಾಡುತ್ತಾನೆ; ಬಾಯಲ್ಲಿ ನೊರೆ ಕಿತ್ತುಕೊಳ್ಳುತ್ತದೆ; ಆ ದೆವ್ವವು ಇವನನ್ನು ನಿಶ್ಯಕ್ತನನ್ನಾಗಿ ಮಾಡಿಬಿಡುವ ತನಕ ಬಿಟ್ಟುಹೋಗುವುದೇ ಇಲ್ಲ.</verse>
				<verse number="40">ಅದನ್ನು ಬಿಡಿಸಬೇಕೆಂದು ತಮ್ಮ ಶಿಷ್ಯರನ್ನು ಬೇಡಿಕೊಂಡೆ; ಆದರೆ ಅವರಿಂದ ಸಾಧ್ಯವಾಗಲಿಲ್ಲ,” ಎಂದು ಕೂಗಿ ಕೇಳಿಕೊಂಡನು.</verse>
				<verse number="41">ಇದನ್ನಾಲಿಸಿದ ಯೇಸು, “ಅಯ್ಯೋ, ವಿಶ್ವಾಸವಿಲ್ಲದ ದುಷ್ಟ ಪೀಳಿಗೆಯೇ, ಇನ್ನೆಷ್ಟುಕಾಲ ನಿಮ್ಮೊಂದಿಗಿದ್ದು ನಿಮ್ಮನ್ನು ಸಹಿಸಿಕೊಳ್ಳಲಿ?” ಎಂದು ಹೇಳಿ, “ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ,” ಎಂದು ಆಜ್ಞಾಪಿಸಿದರು.</verse>
				<verse number="42">ಆ ಹುಡುಗನು ಬರುತ್ತಿರುವಾಗಲೇ ದೆವ್ವವು ಅವನನ್ನು ನೆಲಕ್ಕೆ ಅಪ್ಪಳಿಸಿ ವಿಲವಿಲನೆ ಒದ್ದಾಡಿಸಿತು. ಆಗ ಯೇಸು ದೆವ್ವವನ್ನು ಗದರಿಸಿ, ಹುಡುಗನನ್ನು ಸ್ವಸ್ಥಮಾಡಿ, ಅವನನ್ನು ಅವನ ತಂದೆಗೆ ಒಪ್ಪಿಸಿದರು.</verse>
				<verse number="43">ದೇವರ ಮಹತ್ವವನ್ನು ಕಂಡ ಎಲ್ಲರೂ ಆಶ್ಚರ್ಯಚಕಿತರಾದರು. ಯೇಸುಸ್ವಾಮಿ ಮಾಡಿದ ಸಕಲ ಮಹತ್ಕಾರ್ಯಗಳನ್ನು ಕುರಿತು ಜನರೆಲ್ಲರೂ ಸೋಜಿಗಪಡುತ್ತಿರುವಲ್ಲಿ, ಶಿಷ್ಯರಿಗೆ,</verse>
				<verse number="44">“ಈ ನನ್ನ ಮಾತು ನಿಮ್ಮ ಕಿವಿಗೆ ಇಳಿಯಲಿ. ಅದೇನೆಂದರೆ: “ನರಪುತ್ರನು ಜನರ ವಶಕ್ಕೆ ಒಪ್ಪಿಸಲ್ಪಡಲಿದ್ದಾನೆ,” ಎಂದರು.</verse>
				<verse number="45">ಯೇಸು ಹೇಳಿದ ಈ ಮಾತನ್ನು ಶಿಷ್ಯರು ಗ್ರಹಿಸಿಕೊಳ್ಳಲಿಲ್ಲ; ಒಗಟಿನ ಹಾಗೆ ಇದ್ದುದರಿಂದ ಅರ್ಥಮಾಡಿಕೊಳ್ಳಲಿಲ್ಲ. ಅದನ್ನು ಕುರಿತು ಯೇಸುವನ್ನು ಕೇಳುವುದಕ್ಕೂ ಅವರು ಅಂಜಿದರು.</verse>
				<verse number="46">ಒಮ್ಮೆ, ತಮ್ಮಲ್ಲಿ ಅತಿ ಶ್ರೇಷ್ಠನು ಯಾರೆಂಬ ವಾದ ಶಿಷ್ಯರಲ್ಲಿ ಎದ್ದಿತು.</verse>
				<verse number="47">ಅವರ ಮನಸ್ಸಿನ ಆಲೋಚನೆಗಳನ್ನು ಅರಿತ ಯೇಸು, ಒಂದು ಚಿಕ್ಕ ಮಗುವನ್ನು ತಂದು ತಮ್ಮ ಪಕ್ಕದಲ್ಲಿ ನಿಲ್ಲಿಸಿಕೊಂಡು,</verse>
				<verse number="48">“ಯಾವನು ನನ್ನ ಹೆಸರಿನಲ್ಲಿ ಈ ಮಗುವನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನೇ ಸ್ವೀಕರಿಸುತ್ತಾನೆ; ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ. ನಿಮ್ಮೆಲ್ಲರಲ್ಲಿ ಅತ್ಯಲ್ಪನಾದವನೇ ಅತ್ಯುತ್ತಮನು,” ಎಂದರು.</verse>
				<verse number="49">ಆಗ ಯೊವಾನ್ನನು ಯೇಸುವಿಗೆ, “ಗುರುವೇ, ಯಾವನೋ ಒಬ್ಬನು ತಮ್ಮ ಹೆಸರಿನಲ್ಲಿ ದೆವ್ವ ಬಿಡಿಸುವುದನ್ನು ಕಂಡೆವು. ಅವನು ನಮ್ಮವನಲ್ಲದ ಕಾರಣ ಅವನನ್ನು ತಡೆದೆವು,” ಎಂದನು.</verse>
				<verse number="50">ಅದಕ್ಕೆ ಯೇಸು, “ಅವನನ್ನು ತಡೆಯಬೇಡಿ, ನಿಮ್ಮ ವಿರೋಧಿ ಅಲ್ಲದವನು ನಿಮ್ಮ ಪರವಾದಿ,” ಎಂದು ಉತ್ತರಕೊಟ್ಟರು.</verse>
				<verse number="51">ತಾವು ಸ್ವರ್ಗಾರೋಹಣವಾಗುವ ದಿನಗಳು ಸಮೀಪಿಸಲು ಯೇಸುಸ್ವಾಮಿ ಜೆರುಸಲೇಮಿಗೆ ಅಭಿಮುಖವಾಗಿ ಹೊರಡಲು ನಿರ್ಧರಿಸಿದರು.</verse>
				<verse number="52">ಅಲ್ಲದೆ ತಮಗೆ ಮುಂದಾಗಿ ದೂತರನ್ನು ಕಳುಹಿಸಿದರು. ಇವರು ಹೊರಟು ಯೇಸುವಿಗೆ ಬೇಕಾದುದನ್ನು ಸಿದ್ಧಮಾಡಲು ಸಮಾರಿಯದ ಒಂದು ಹಳ್ಳಿಗೆ ಬಂದರು.</verse>
				<verse number="53">ಯೇಸು ಜೆರುಸಲೇಮಿಗೆ ಹೋಗುತ್ತಿದ್ದ ಕಾರಣ ಅವರನ್ನು ಅಲ್ಲಿಯ ಜನರು ಬರಗೊಳಿಸಲಿಲ್ಲ.</verse>
				<verse number="54">ಇದನ್ನು ಕಂಡು ಶಿಷ್ಯರಾದ ಯಕೋಬ ಮತ್ತು ಯೊವಾನ್ನ, “ಪ್ರಭೂ, ಆಕಾಶದಿಂದ ಅಗ್ನಿಮಳೆ ಸುರಿದು ಇವರನ್ನು ನಾಶಮಾಡಲಿ ಎಂದು ಆಜ್ಞೆಮಾಡಬಹುದಲ್ಲವೇ?” ಎಂದರು.</verse>
				<verse number="55">ಯೇಸು ಅವರ ಕಡೆ ತಿರುಗಿ, “ನೀವು ಎಂಥ ಸ್ವಭಾವಿಗಳೆಂದು ನಿಮಗೇ ತಿಳಿಯದು. ನರಪುತ್ರನು ಬಂದಿರುವುದು ಮಾನವ ಜೀವಿಗಳ ವಿನಾಶಕ್ಕೆ ಅಲ್ಲ, ಉದ್ಧಾರಕ್ಕೆ,” ಎಂದು ಅವರನ್ನು ಖಂಡಿಸಿದರು.</verse>
				<verse number="56">ಅನಂತರ ಯೇಸು ಮತ್ತು ಶಿಷ್ಯರು ಬೇರೆ ಹಳ್ಳಿಗೆ ಹೋದರು.</verse>
				<verse number="57">ಅವರೆಲ್ಲರೂ ದಾರಿಯಲ್ಲಿ ಹೋಗುತ್ತಿದ್ದಾಗ ಒಬ್ಬನು ಯೇಸುವಿಗೆ, “ನೀವು ಎಲ್ಲಿಗೆ ಹೋದರೂ ನಿಮ್ಮನ್ನು ಹಿಂಬಾಲಿಸುತ್ತೇನೆ,” ಎಂದನು.</verse>
				<verse number="58">ಯೇಸು ಅವನಿಗೆ, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಡುವುದಕ್ಕೂ ಸ್ಥಳವಿಲ್ಲ,” ಎಂದರು.</verse>
				<verse number="59">ಇನ್ನೊಬ್ಬನಿಗೆ ಯೇಸು, “ನನ್ನನ್ನು ಹಿಂಬಾಲಿಸು,” ಎಂದು ಹೇಳಿದಾಗ ಅವನು, “ಸ್ವಾಮೀ, ಮೊದಲು ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮುಗಿಸುವ ತನಕ ಸಮಯಕೊಡಿ,” ಎಂದನು.</verse>
				<verse number="60">ಅವನಿಗೆ ಯೇಸು, “ಸತ್ತವರೇ ತಮ್ಮ ಸತ್ತವರನ್ನು ಸಮಾಧಿಮಾಡಿಕೊಳ್ಳಲಿ; ನೀನಾದರೋ, ಹೋಗು, ದೇವರ ಸಾಮ್ರಾಜ್ಯವನ್ನು ಪ್ರಚಾರಮಾಡು,” ಎಂದು ಹೇಳಿದರು.</verse>
				<verse number="61">ಮತ್ತೊಬ್ಬನು, “ನಿಮ್ಮನ್ನು ಹಿಂಬಾಲಿಸುತ್ತೇನೆ ಪ್ರಭೂ, ಆದರೆ ಮೊದಲು ಮನೆಯವರನ್ನು ಬೀಳ್ಕೊಟ್ಟು ಬರಲು ಅಪ್ಪಣೆ ಆಗಬೇಕು,” ಎಂದನು.</verse>
				<verse number="62">ಯೇಸು ಅವನನ್ನು ನೋಡಿ, “ನೇಗಿಲಿಗೆ ಕೈಹಾಕಿ ಹಿಂದಕ್ಕೆ ನೋಡುವವನು ದೇವರ ಸಾಮ್ರಾಜ್ಯಕ್ಕೆ ತಕ್ಕವನಲ್ಲ,” ಎಂದರು.</verse>
			</chapter>
			<chapter number="10">
				<verse number="1">ಇದಾದ ಮೇಲೆ, ಯೇಸುಸ್ವಾಮಿ ಇನ್ನೂ ಎಪ್ಪತ್ತೆರಡು ಮಂದಿಯನ್ನು ನೇಮಿಸಿ ಅವರನ್ನು ಇಬ್ಬಿಬ್ಬರನ್ನಾಗಿ ತಾವೇ ಹೋಗಲಿದ್ದ ಊರುಗಳಿಗೂ ಸ್ಥಳಗಳಿಗೂ ಮುಂದಾಗಿ ಕಳಿಸಿದರು.</verse>
				<verse number="2">ಕಳುಹಿಸುವಾಗ ಅವರಿಗೆ ಹೇಳಿದ್ದೇನೆಂದರೆ, “ಬೆಳೆಯೇನೋ ಹೇರಳವಾಗಿದೆ; ಕೊಯ್ಲುಗಾರರೊ ವಿರಳ. ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸುವಂತೆ ಬೆಳೆಯ ಯಜಮಾನನನ್ನು ಬೇಡಿಕೊಳ್ಳಿ.</verse>
				<verse number="3">ಹೋಗಿರಿ, ತೋಳಗಳ ನಡುವೆ ಕುರಿಮರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ.</verse>
				<verse number="4">ಹಣದ ಚೀಲವನ್ನಾಗಲಿ, ಜೋಳಿಗೆಯನ್ನಾಗಲಿ, ಪಾದರಕ್ಷೆಗಳನ್ನಾಗಲಿ ತೆಗೆದುಕೊಂಡು ಹೋಗದಿರಿ. ದಾರಿಯಲ್ಲಿ ಯಾರಿಗೂ ವಂದನೋಪಚಾರಗಳನ್ನು ಮಾಡಿಕೊಂಡಿರಬೇಡಿ.</verse>
				<verse number="5">ನೀವು ಯಾವ ಮನೆಗೆ ಹೋದರೂ, ‘ಈ ಮನೆಗೆ ಶಾಂತಿ,’ ಎಂದು ಆಶೀರ್ವಾದ ಮಾಡಿ.</verse>
				<verse number="6">ಶಾಂತಿಪ್ರಿಯನು ಅಲ್ಲಿದ್ದರೆ ನಿಮ್ಮ ಆಶೀರ್ವಾದವು ಅವನ ಮೇಲೆ ನೆಲೆಸುವುದು. ಇಲ್ಲವಾದರೆ, ಅದು ನಿಮಗೆ ಹಿಂದಿರುಗುವುದು.</verse>
				<verse number="7">ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು.</verse>
				<verse number="8">“ನೀವು ಯಾವ ಊರಿಗೆ ಹೋದರೂ ಜನರು ನಿಮ್ಮನ್ನು ಸ್ವಾಗತಿಸಿದಾಗ, ಅವರು ಬಡಿಸಿದ್ದನ್ನು ಭುಜಿಸಿರಿ.</verse>
				<verse number="9">ಅಲ್ಲಿರುವ ರೋಗಿಗಳನ್ನು ಗುಣಪಡಿಸಿರಿ. ‘ದೇವರ ಸಾಮ್ರಾಜ್ಯ ನಿಮ್ಮನ್ನು ಸಮೀಪಿಸಿದೆ,’ ಎಂದು ತಿಳಿಸಿರಿ.</verse>
				<verse number="10">ಆದರೆ ನೀವು ಹೋಗುವ ಊರಿನ ಜನರು ನಿಮ್ಮನ್ನು ಸ್ವಾಗತಿಸದೆ ಹೋದರೆ, ರಸ್ತೆಗಳಿಗೆ ಹೋಗಿ,</verse>
				<verse number="11">‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮಗೆ ವಿರುದ್ಧವಾಗಿ ಒದರಿಬಿಡುತ್ತೇವೆ. ಆದರೂ ದೇವರ ಸಾಮ್ರಾಜ್ಯ ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ,’ ಎಂದು ತಿಳಿಸಿರಿ.</verse>
				<verse number="12">ತೀರ್ಪಿನ ದಿನ ಈ ಊರಿನ ಗತಿ ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದೆಂದು ನಾನು ನಿಮಗೆ ಹೇಳುತ್ತೇನೆ.</verse>
				<verse number="13">“ಕೊರಾಜ್ಜಿನ್ ಪಟ್ಟಣವೇ, ನಿನಗೆ ಧಿಕ್ಕಾರ! ಬೆತ್ಸಾಯಿದ ಪಟ್ಟಣವೇ, ನಿನಗೆ ಧಿಕ್ಕಾರ! ನಿಮ್ಮಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ಮಾಡಿದ್ದರೆ, ಅಲ್ಲಿಯವರು ಎಂದೋ ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಬಳಿದುಕೊಂಡು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗುತ್ತಿದ್ದರು.</verse>
				<verse number="14">ಆದುದರಿಂದ ತೀರ್ಪಿನ ದಿನ ಟೈರ್ ಮತ್ತು ಸಿದೋನಿನ ಗತಿಯು ನಿಮಗಿಂತಲೂ ಸಹನೀಯವಾಗಿರುವುದು.</verse>
				<verse number="15">ಎಲೈ ಕಫೆರ್ನವುಮ್ ಪಟ್ಟಣವೇ, ನೀನು ಸ್ವರ್ಗಕ್ಕೇರುವೆ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೇ ಇಳಿಯುವೆ,” ಎಂದರು ಯೇಸುಸ್ವಾಮಿ.</verse>
				<verse number="16">ಅನಂತರ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ನಿಮ್ಮನ್ನು ಆಲಿಸುವವನು ನನ್ನನ್ನೇ ಆಲಿಸುತ್ತಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನೇ ಅಲಕ್ಷ್ಯಮಾಡುತ್ತಾನೆ; ನನ್ನನ್ನು ಅಲಕ್ಷ್ಯಮಾಡುವವನಾದರೋ ನನ್ನನ್ನು ಕಳುಹಿಸಿದಾತನನ್ನೇ ಅಲಕ್ಷ್ಯಮಾಡುತ್ತಾನೆ,” ಎಂದರು.</verse>
				<verse number="17">ಕಳುಹಿಸಲಾಗಿದ್ದ ಎಪ್ಪತ್ತೆರಡು ಮಂದಿ ಸಂತೋಷಭರಿತರಾಗಿ ಹಿಂದಿರುಗಿ ಬಂದು, “ಸ್ವಾಮೀ, ನಿಮ್ಮ ಹೆಸರಿನಲ್ಲಿ ಆಜ್ಞೆಮಾಡಿದಾಗ ದೆವ್ವಗಳು ಕೂಡ ನಮಗೆ ಅಧೀನವಾಗುತ್ತವೆ,” ಎಂದು ವರದಿಮಾಡಿದರು.</verse>
				<verse number="18">ಅದಕ್ಕೆ ಯೇಸು, “ಸೈತಾನನು ಆಕಾಶದಿಂದ ಸಿಡಿಲಿನಂತೆ ಬೀಳುವುದನ್ನು ಕಂಡೆನು.</verse>
				<verse number="19">ಇಗೋ, ಸರ್ಪಗಳನ್ನು ಹಾಗೂ ಚೇಳುಗಳನ್ನು ತುಳಿಯುವುದಕ್ಕೂ ಶತ್ರುವಿನ ಸಮಸ್ತ ಶಕ್ತಿಯನ್ನು ಜಯಿಸುವುದಕ್ಕೂ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಹಾನಿಮಾಡದು.</verse>
				<verse number="20">ಆದರೂ ದೆವ್ವಗಳು ನಿಮಗೆ ಅಧೀನವಾಗಿವೆಯೆಂದು ಸಂತೋಷಪಡುವುದಕ್ಕಿಂತ ನಿಮ್ಮ ಹೆಸರುಗಳು ಸ್ವರ್ಗದಲ್ಲಿ ಲಿಖಿತವಾಗಿವೆ ಎಂದು ಸಂತೋಷಪಡಿ,” ಎಂದು ಹೇಳಿದರು.</verse>
				<verse number="21">ಅದೇ ಗಳಿಗೆಯಲ್ಲಿ ಯೇಸುಸ್ವಾಮಿ ಪವಿತ್ರಾತ್ಮರಿಂದ ಹರ್ಷಾವೇಶಗೊಂಡು, “ಪಿತನೇ, ಭೂಸ್ವರ್ಗಗಳ ಒಡೆಯನೇ, ಈ ವಿಷಯಗಳನ್ನು ಜ್ಞಾನಿಗಳಿಗೂ ಮೇಧಾವಿಗಳಿಗೂ ಮರೆಮಾಡಿ, ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ. ಹೌದು ಪಿತನೇ, ಇದೇ ನಿಮ್ಮ ಸುಪ್ರೀತ ಸಂಕಲ್ಪ.</verse>
				<verse number="22">ನನ್ನ ಪಿತ ಸಮಸ್ತವನ್ನೂ ನನ್ನ ವಶಕ್ಕೆ ಒಪ್ಪಿಸಿದ್ದಾರೆ. ಪುತ್ರನು ಯಾರೆಂದು ಪಿತನ ಹೊರತು ಬೇರಾರೂ ಅರಿಯರು. ಪಿತನು ಯಾರೆಂದು ಪುತ್ರನು ಮತ್ತು ಯಾರಿಗೆ ಪುತ್ರನು ಅವರನ್ನು ಶ್ರುತಪಡಿಸಲು ಇಚ್ಛಿಸುತ್ತಾನೋ ಅವನೇ ಹೊರತು ಮತ್ತಾರೂ ಅರಿಯರು,” ಎಂದು ಹೇಳಿದರು.</verse>
				<verse number="23">ಅನಂತರ ಯೇಸು ಶಿಷ್ಯರ ಕಡೆ ತಿರುಗಿ, ಅವರಿಗೆ ಪ್ರತ್ಯೇಕವಾಗಿ, “ನೀವು ಕಾಣುವುದನ್ನು ಕಾಣುವ ಕಣ್ಣುಗಳು ಭಾಗ್ಯವುಳ್ಳವು.</verse>
				<verse number="24">ಏಕೆಂದರೆ, ಎಷ್ಟೋ ಪ್ರವಾದಿಗಳು ಹಾಗೂ ಅರಸರು ನೀವು ನೋಡುವುದನ್ನು ನೋಡುವುದಕ್ಕೂ, ನೀವು ಕೇಳುವುದನ್ನು ಕೇಳುವುದಕ್ಕೂ ಆಶಿಸಿದರು. ಆದರೂ ಅದನ್ನು ಅವರು ನೋಡಲೂ ಇಲ್ಲ, ಕಾಣಲೂ ಇಲ್ಲ ಎಂದು ನಿಮಗೆ ಹೇಳುತ್ತೇನೆ,” ಎಂದರು.</verse>
				<verse number="25">ಒಬ್ಬ ಶಾಸ್ತ್ರಜ್ಞನು ಎದ್ದು ಯೇಸುಸ್ವಾಮಿಯನ್ನು ಪರೀಕ್ಷಿಸುವ ಉದ್ದೇಶದಿಂದ “ಬೋಧಕರೇ, ಅಮರಜೀವ ನನಗೆ ಪ್ರಾಪ್ತಿ ಆಗಬೇಕಾದರೆ ನಾನು ಮಾಡಬೇಕಾದುದು ಏನು?” ಎಂದು ಕೇಳಿದನು.</verse>
				<verse number="26">ಅದಕ್ಕೆ ಯೇಸು, “ಧರ್ಮಶಾಸ್ತ್ರದಲ್ಲಿ ಏನು ಬರೆದಿದೆ? ಹೇಗೆ ಪಠಿಸುತ್ತೀಯೆ?” ಎಂದು ಮರುಪ್ರಶ್ನೆ ಹಾಕಿದರು.</verse>
				<verse number="27">ಅವನು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಆತ್ಮದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು ಮತ್ತು ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು’ ಎಂದಿದೆ,” ಎಂದು ಉತ್ತರಕೊಟ್ಟನು.</verse>
				<verse number="28">ಯೇಸು, “ಸರಿಯಾಗಿ ಉತ್ತರಕೊಟ್ಟೆ, ಅದರಂತೆ ಮಾಡು. ನಿನಗೆ ಅಮರಜೀವ ಲಭಿಸುವುದು,” ಎಂದರು.</verse>
				<verse number="29">ಆದರೆ ಆ ಶಾಸ್ತ್ರಜ್ಞನು ತನ್ನನ್ನು ತಾನೇ ಸಮರ್ಥಿಸಿಕೊಳ್ಳಲು, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಮತ್ತೆ ಪ್ರಶ್ನಿಸಿದನು.</verse>
				<verse number="30">ಆಗ ಯೇಸು ಅವನಿಗೆ ಹೀಗೆಂದು ವಿವರಿಸಿದರು: “ಒಬ್ಬನು ಜೆರುಸಲೇಮಿನಿಂದ ಇಳಿದು ಜೆರಿಕೋವಿಗೆ ಪ್ರಯಾಣ ಮಾಡುತ್ತಿದ್ದಾಗ, ದರೋಡೆಗಾರರ ಕೈಗೆ ಸಿಕ್ಕಿಬಿದ್ದ. ದರೋಡೆಗಾರರು ಅವನನ್ನು ಸುಲಿಗೆಮಾಡಿ, ಹೊಡೆದು ಬಡಿದು, ಅರೆಜೀವ ಮಾಡಿ ಅಲ್ಲೇ ಬಿಟ್ಟುಹೋದರು.</verse>
				<verse number="31">ಅದೇ ಮಾರ್ಗವಾಗಿ ಒಬ್ಬ ಯಾಜಕನು ಹಾದುಹೋಗಬೇಕಾಗಿ ಬಂದಿತು. ಈತನು, ಅವನನ್ನು ಕಂಡದ್ದೇ ಆಚೆ ಬಳಸಿಕೊಂಡು ಹೋದ.</verse>
				<verse number="32">ಹಾಗೆಯೇ ಲೇವಿಯೊಬ್ಬನು ಆ ಸ್ಥಳಕ್ಕೆ ಬಂದು ಅವನನ್ನು ನೋಡಿ, ಹಾಗೆಯೇ ಬಳಸಿಕೊಂಡು ಹೋದ.</verse>
				<verse number="33">ಆದರೆ ಆ ಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದ ಒಬ್ಬ ಸಮಾರಿಯದವನು ಅಲ್ಲಿಗೆ ಬಂದಾಗ, ಅವನನ್ನು ಕಂಡು ಕನಿಕರಪಟ್ಟು,</verse>
				<verse number="34">ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹಚ್ಚಿ ಅವುಗಳಿಗೆ ಬಟ್ಟೆ ಕಟ್ಟಿದ. ಬಳಿಕ ಅವನನ್ನು ತನ್ನ ಸ್ವಂತ ವಾಹಕಪಶುವಿನ ಮೇಲೆ ಹತ್ತಿಸಿಕೊಂಡು ಒಂದು ಛತ್ರಕ್ಕೆ ಕರೆದುಕೊಂಡು ಹೋಗಿ, ಆರೈಕೆ ಮಾಡಿದ.</verse>
				<verse number="35">ಮಾರನೆಯ ದಿನ ಎರಡು ದಿನಾರಿ ನಾಣ್ಯಗಳನ್ನು ಛತ್ರದವನಿಗೆ ಕೊಟ್ಟು, ‘ಇವನನ್ನು ಚೆನ್ನಾಗಿ ನೋಡಿಕೊ, ಇದಕ್ಕಿಂತ ಹೆಚ್ಚು ವೆಚ್ಚ ಆದರೆ ನಾನು ಹಿಂದಿರುಗಿ ಬರುವಾಗ ಸಲ್ಲಿಸುತ್ತೇನೆ,’ ಎಂದ.</verse>
				<verse number="36">“ದರೋಡೆಗಾರರ ಕೈಗೆ ಸಿಕ್ಕಿದವನಿಗೆ ಈ ಮೂವರಲ್ಲಿ ಯಾರು ನೆರೆಯವನೆಂದು ನಿನಗೆ ತೋರುತ್ತದೆ?” ಎಂದು ಯೇಸು ಆ ಶಾಸ್ತ್ರಜ್ಞನನ್ನು ಕೇಳಿದರು.</verse>
				<verse number="37">ಅದಕ್ಕೆ ಅವನು, “ದಯೆತೋರಿದವನೇ ನೆರೆಯವನು,” ಎಂದನು. ಆಗ ಯೇಸು, “ಹೋಗು, ನೀನೂ ಹಾಗೆಯೇ ಮಾಡು,” ಎಂದು ಹೇಳಿದರು.</verse>
				<verse number="38">ಯೇಸುಸ್ವಾಮಿ ತಮ್ಮ ಶಿಷ್ಯರೊಡನೆ ಪ್ರಯಾಣ ಮುಂದುವರಿಸಿ ಒಂದು ಹಳ್ಳಿಗೆ ಬಂದರು. ಅಲ್ಲಿ ಮಾರ್ತಳೆಂಬ ಮಹಿಳೆ ಅವರನ್ನು ತಮ್ಮ ಮನೆಗೆ ಆಮಂತ್ರಿಸಿದಳು.</verse>
				<verse number="39">ಆಕೆಗೆ ಮರಿಯಳೆಂಬ ಸೋದರಿ ಇದ್ದಳು. ಈಕೆ ಪ್ರಭುವಿನ ಪಾದತಳದಲ್ಲಿ ಕುಳಿತುಕೊಂಡು ಅವರ ಬೋಧನೆಯನ್ನು ಆಲಿಸುತ್ತಿದ್ದಳು.</verse>
				<verse number="40">ಮಾರ್ತಳಾದರೋ, ಅತಿಥಿಸತ್ಕಾರದ ಗಡಿಬಿಡಿಯಲ್ಲಿ ಇದ್ದಳು. ಅವಳು ಬಂದು, “ಪ್ರಭೂ, ನನ್ನ ಸೋದರಿ ಈ ಕೆಲಸವನ್ನೆಲ್ಲಾ ನನ್ನೊಬ್ಬಳಿಗೇ ಬಿಟ್ಟಿದ್ದಾಳೆ. ನೀವಿದನ್ನು ಗಮನಿಸಬಾರದೇ? ನನಗೆ ಸಹಾಯ ಮಾಡುವಂತೆ ಅವಳಿಗೆ ಹೇಳಿ,” ಎಂದಳು.</verse>
				<verse number="41">ಯೇಸು ಆಕೆಗೆ ಪ್ರತ್ಯುತ್ತರವಾಗಿ, “ಮಾರ್ತಾ, ಮಾರ್ತಾ, ನೀನು ಅನಾವಶ್ಯ ಚಿಂತೆ ಪೇಚಾಟಗಳಿಗೆ ಒಳಗಾಗಿರುವೆ.</verse>
				<verse number="42">ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು,” ಎಂದರು.</verse>
			</chapter>
			<chapter number="11">
				<verse number="1">ಒಮ್ಮೆ ಯೇಸುಸ್ವಾಮಿ ಒಂದು ಸ್ಥಳದಲ್ಲಿ ಪ್ರಾರ್ಥನೆಮಾಡುತ್ತಾ ಇದ್ದರು. ಅವರ ಪ್ರಾರ್ಥನೆ ಮುಗಿದ ಮೇಲೆ ಶಿಷ್ಯರಲ್ಲಿ ಒಬ್ಬನು. “ಪ್ರಭುವೇ, ಯೊವಾನ್ನನು ತನ್ನ ಶಿಷ್ಯರಿಗೆ ಪ್ರಾರ್ಥನೆ ಮಾಡುವುದನ್ನು ಕಲಿಸಿದ ಹಾಗೆ ನಮಗೂ ಕಲಿಸಿಕೊಡಿ,” ಎಂದನು. ಅದಕ್ಕೆ ಯೇಸು ಇಂತೆಂದರು, “ನೀವು ಹೀಗೆ ಪ್ರಾರ್ಥನೆಮಾಡಬೇಕು: ತಂದೆಯೇ,</verse>
				<verse number="2">ನಿಮ್ಮ ಪವಿತ್ರನಾಮ ಪೂಜಿತವಾಗಲಿ; ನಿಮ್ಮ ಸಾಮ್ರಾಜ್ಯ ಬರಲಿ.</verse>
				<verse number="3">ನಮಗೆ ಅಗತ್ಯವಾದ ಆಹಾರವನ್ನು ಅನುದಿನವೂ ಕೊಡಿ.</verse>
				<verse number="4">ನಮಗೆ ತಪ್ಪು ಮಾಡಿದ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ, ನಮ್ಮ ಪಾಪಗಳನ್ನು ಕ್ಷಮಿಸಿರಿ. ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ’.”</verse>
				<verse number="5">ಪುನಃ ಯೇಸುಸ್ವಾಮಿ ಶಿಷ್ಯರಿಗೆ, “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ: ಅವನು, ‘ಗೆಳೆಯಾ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು.</verse>
				<verse number="6">ಪ್ರಯಾಣದಲ್ಲಿದ್ದ ನನ್ನ ಸ್ನೇಹಿತನೊಬ್ಬನು ಅನಿರೀಕ್ಷಿತವಾಗಿ ನನ್ನ ಮನೆಗೆ ಈಗತಾನೆ ಬಂದಿದ್ದಾನೆ. ಅವನಿಗೆ ಊಟಕ್ಕಿಡಲು ನನ್ನಲ್ಲಿ ಏನೂ ಇಲ್ಲ,’ ಎಂದು ಕೇಳಲು,</verse>
				<verse number="7">ಈ ಸ್ನೇಹಿತ ಒಳಗಿನಿಂದಲೇ, ‘ನನಗೆ ತೊಂದರೆ ಕೊಡಬೇಡ; ಬಾಗಿಲು ಹಾಕಿ ಆಗಿದೆ; ನನ್ನ ಮಕ್ಕಳು ನನ್ನ ಕೂಡ ಮಲಗಿದ್ದಾರೆ; ನಾನು ಎದ್ದು ಬಂದು ಕೊಡುವುದಕ್ಕಾಗುವುದಿಲ್ಲ,’ ಎಂದು ಉತ್ತರ ಕೊಡುವುದು ಸಹಜವಲ್ಲವೇ?</verse>
				<verse number="8">ಆದರೂ, ತನ್ನ ಗೆಳೆಯ ಇವನು ಎಂದು ಎದ್ದುಬಂದು ಕೊಡದೆ ಇದ್ದರೂ, ನಾಚಿಕೆಪಡದೆ ಕೇಳುತ್ತಲೇ ಇದ್ದಾನಲ್ಲಾ ಎಂಬ ಕಾರಣದಿಂದಾದರೂ ಅವನು ಎದ್ದುಬಂದು ಕೇಳಿದಷ್ಟನ್ನು ಕೊಡುತ್ತಾನೆಂಬುದು ನಿಜ.</verse>
				<verse number="9">ಆದುದರಿಂದ: ‘ಕೇಳಿರಿ, ನಿಮಗೆ ದೊರಕುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.</verse>
				<verse number="10">ಏಕೆಂದರೆ, ಕೇಳಿಕೊಳ್ಳುವ ಪ್ರತಿಯೊಬ್ಬನಿಗೂ ದೊರಕುವುದು; ಹುಡುಕುವವನಿಗೆ ಸಿಗುವುದು; ತಟ್ಟುವವನಿಗೆ ಬಾಗಿಲು ತೆರೆಯಲಾಗುವುದು.’</verse>
				<verse number="11">“ನಿಮ್ಮಲ್ಲಿ ಯಾವ ತಂದೆ ತಾನೇ ತನ್ನ ಮಗ ಮೀನನ್ನು ಕೇಳಿದರೆ ಹಾವನ್ನು ಕೊಡುತ್ತಾನೆ?</verse>
				<verse number="12">ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುತ್ತಾನೆ?</verse>
				<verse number="13">ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”</verse>
				<verse number="14">ಒಮ್ಮೆ ಯೇಸುಸ್ವಾಮಿ ಒಂದು ಮೂಕ ದೆವ್ವವನ್ನು ಬಿಡಿಸುತ್ತಿದ್ದರು. ಆ ದೆವ್ವ ಬಿಟ್ಟುಹೋದ ಮೇಲೆ ಮೂಕನು ಮಾತನಾಡಿದನು. ಜನರು ಆಶ್ಚರ್ಯಚಕಿತರಾದರು.</verse>
				<verse number="15">ಆದರೆ ಅವರಲ್ಲಿ ಕೆಲವರು, “ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ,” ಎಂದರು. ಬೇರೆ ಕೆಲವರು ಯೇಸುವನ್ನು ಪರೀಕ್ಷಿಸುವುದಕ್ಕಾಗಿ</verse>
				<verse number="16">ಸ್ವರ್ಗದಿಂದ ಒಂದು ಅದ್ಭುತಕಾರ್ಯವನ್ನು ಮಾಡಿತೋರಿಸುವಂತೆ ಕೇಳಿದರು.</verse>
				<verse number="17">ಅವರ ಆಲೋಚನೆಗಳನ್ನು ಅರಿತುಕೊಂಡು ಯೇಸು, “ಅಂತಃಕಲಹದಿಂದ ಒಡೆದು ಹೋಗಿರುವ ಪ್ರತಿಯೊಂದು ರಾಜ್ಯ ನಾಶವಾಗುವುದು; ಕುಟುಂಬ ಕುಟುಂಬಗಳು ಕಚ್ಚಾಡಿ ಹಾಳಾಗುವುವು.</verse>
				<verse number="18">ಅಂತೆಯೇ ಸೈತಾನನ ಪಕ್ಷದವರು ಒಬ್ಬರ ವಿರುದ್ಧ ಒಬ್ಬರು ಜಗಳ ಆಡಿದರೆ ಅವನ ರಾಜ್ಯ ಹೇಗೆ ತಾನೆ ಉಳಿದೀತು?</verse>
				<verse number="19">ನಾನು ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ನಿಮ್ಮವರು ಯಾರ ಶಕ್ತಿಯಿಂದ ಬಿಡಿಸುತ್ತಾರೆ? ಆದ್ದರಿಂದ ನೀವು ಹೇಳುವುದು ತಪ್ಪೆಂದು ನಿಮ್ಮವರೇ ತೀರ್ಪುಕೊಡುವರು.</verse>
				<verse number="20">ನಾನು ದೇವರ ಶಕ್ತಿಯಿಂದ ದೆವ್ವಗಳನ್ನು ಬಿಡಿಸುವುದಾದರೆ ದೇವರ ಸಾಮ್ರಾಜ್ಯ ನಿಮ್ಮಲ್ಲಿಗೆ ಈಗಾಗಲೇ ಬಂದಿದೆ, ಎಂಬುದು ಸ್ಪಷ್ಟ.</verse>
				<verse number="21">“ಬಲಿಷ್ಠನೊಬ್ಬನು ಸರ್ವಾಯುಧಗಳಿಂದ ಸಜ್ಜಿತನಾಗಿ ತನ್ನ ಮನೆಗೆ ಕಾವಲಿರುವಾಗ ಅವನ ಆಸ್ತಿಯೆಲ್ಲ ಸುರಕ್ಷಿತವಾಗಿರುತ್ತದೆ.</verse>
				<verse number="22">ಆದರೆ ಇವನಿಗಿಂತಲೂ ಬಲಿಷ್ಠನು ಎದುರಿಸಿ ಬಂದು ಇವನನ್ನು ಗೆದ್ದಾಗ, ಇವನು ನೆಚ್ಚಿಕೊಂಡಿದ್ದ ಆಯುಧಗಳನ್ನೆಲ್ಲಾ ಅವನು ಕಿತ್ತುಕೊಂಡು, ಸುಲಿಗೆಯನ್ನು ಹಂಚಿಕೊಡುತ್ತಾನೆ.</verse>
				<verse number="23">“ನನ್ನ ಪರವಾಗಿ ಇರದವನು ನನಗೆ ವಿರೋಧಿಯೇ ಸರಿ. ನನ್ನೊಡನೆ ಶೇಖರಿಸದವನು ಚದರಿಸುತ್ತಾನೆ,” ಎಂದರು.</verse>
				<verse number="24">ಯೇಸುಸ್ವಾಮಿ ಬೋಧನೆಯನ್ನು ಮುಂದುವರಿಸುತ್ತಾ, “ದೆವ್ವವು ಒಬ್ಬ ಮನುಷ್ಯನನ್ನು ಬಿಟ್ಟು ತೊಲಗಿದ ಮೇಲೆ ನೆಲೆಯನ್ನು ಹುಡುಕುತ್ತಾ ಒಣಗಾಡಿನಲ್ಲಿ ಅಲೆದಾಡುತ್ತದೆ. ಅದಕ್ಕೆ ನೆಲೆ ಸಿಗದ ಕಾರಣ ಅದು, ‘ನಾನು ಬಿಟ್ಟುಬಂದ ನನ್ನ ಮನೆಗೇ ಹಿಂದಿರುಗುತ್ತೇನೆ’ ಎಂದುಕೊಳ್ಳುತ್ತದೆ.</verse>
				<verse number="25">ಅದು ಮರಳಿ ಬಂದಾಗ, ಮನೆ ಗುಡಿಸಿರುವುದನ್ನೂ ಎಲ್ಲವೂ ಚೊಕ್ಕಟವಾಗಿರುವುದನ್ನೂ ಕಾಣುತ್ತದೆ.</verse>
				<verse number="26">ಪುನಃ ಹೊರಟು ಹೋಗಿ ತನಗಿಂತಲೂ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ಕರೆದುಕೊಂಡು ಬರುತ್ತದೆ. ಅವು ಆ ಮನುಷ್ಯನ ಒಳ ಹೊಕ್ಕು ನೆಲಸುತ್ತವೆ. ಕೊನೆಗೆ ಅವನ ಪರಿಸ್ಥಿತಿ ಪೂರ್ವಸ್ಥಿತಿಗಿಂತಲೂ ಅಧೋಗತಿಗೆ ಇಳಿಯುತ್ತದೆ,” ಎಂದರು.</verse>
				<verse number="27">ಯೇಸುಸ್ವಾಮಿ ಹೀಗೆ ಮಾತನಾಡುತ್ತಿದ್ದಾಗ ಜನಸಮೂಹದಿಂದ ಮಹಿಳೆಯೊಬ್ಬಳು, “ನಿಮ್ಮನ್ನು ಉದರದಲ್ಲಿ ಹೊತ್ತು, ನಿಮಗೆ ಮೊಲೆಯೂಡಿಸಿದ ತಾಯಿ ಭಾಗ್ಯವಂತಳು!” ಎಂದು ಕೂಗಿ ಹೇಳಿದಳು.</verse>
				<verse number="28">ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವನು ಹೆಚ್ಚು ಭಾಗ್ಯವಂತನು!” ಎಂದರು.</verse>
				<verse number="29">ಜನರ ಗುಂಪು ಹೆಚ್ಚುತ್ತಿದ್ದಾಗ, ಯೇಸುಸ್ವಾಮಿ ಹೀಗೆಂದು ಮುಂದುವರಿಸಿದರು: “ಈ ಪೀಳಿಗೆ ಕೆಟ್ಟ ಪೀಳಿಗೆ. ಇದು ಅದ್ಭುತಕಾರ್ಯವನ್ನು ಸಂಕೇತವಾಗಿ ಕೋರುತ್ತದೆ. ಪ್ರವಾದಿ ಯೋನನ ಸಂಕೇತವೇ ಹೊರತು ಬೇರೆ ಯಾವ ಸಂಕೇತವೂ ಇದಕ್ಕೆ ದೊರಕದು.</verse>
				<verse number="30">ಹೇಗೆಂದರೆ, ನಿನೆವೆ ನಗರದ ಜನರಿಗೆ ಪ್ರವಾದಿ ಯೋನನು ಸಂಕೇತವಾದಂತೆ ನರಪುತ್ರನು ಈ ಸಂತತಿಗೆ ಸಂಕೇತವಾಗಿರುವನು.</verse>
				<verse number="31">“ದೈವತೀರ್ಪಿನ ದಿನ ದಕ್ಷಿಣದೇಶದ ರಾಣಿ ಈ ಪೀಳಿಗೆಗೆ ಎದುರಾಗಿ ನಿಂತುಕೊಂಡು, ಇವರನ್ನು ಅಪರಾಧಿಗಳೆಂದು ತೋರಿಸುವಳು. ಆಕೆ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳುವುದಕ್ಕಾಗಿ ದೇಶದ ಕಟ್ಟಕಡೆಯಿಂದ ಬಂದಳು. ಆದರೆ, ಸೊಲೊಮೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.</verse>
				<verse number="32">ತೀರ್ಪಿನ ದಿನ ನಿನೆವೆ ನಗರದವರು ಈ ಪೀಳಿಗೆಗೆ ಎದುರಾಗಿ ನಿಂತು ಇದನ್ನು ಅಪರಾಧಿ ಎಂದು ತೋರಿಸುವರು. ಏಕೆಂದರೆ, ಪ್ರವಾದಿ ಯೋನನ ಬೋಧನೆಯನ್ನು ಕೇಳಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾದರು. ಆದರೆ ಪ್ರವಾದಿ ಯೋನನಿಗಿಂತಲೂ ಮೇಲಾದವನು ಇಗೋ, ಇಲ್ಲಿದ್ದಾನೆ.</verse>
				<verse number="33">“ಯಾರೂ ದೀಪವನ್ನು ಹಚ್ಚಿ ನೆಲಮಾಳಿಗೆಯಲ್ಲಾಗಲಿ, ಬಟ್ಟಲ ಕೆಳಗಾಗಲಿ ಇಡುವುದಿಲ್ಲ. ಮನೆಯೊಳಕ್ಕೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲಿಡುತ್ತಾರೆ.</verse>
				<verse number="34">“ನಿನ್ನ ಕಣ್ಣೇ ದೇಹಕ್ಕೆ ದೀಪ; ನಿನ್ನ ಕಣ್ಣು ಸರಿಯಿದ್ದರೆ ನಿನ್ನ ದೇಹವೆಲ್ಲ ಕಾಂತಿಮಯವಾಗುವುದು. ಅದು ಕೆಟ್ಟಿದ್ದರೆ, ದೇಹವೆಲ್ಲಾ ಕತ್ತಲೆಮಯವಾಗುವುದು.</verse>
				<verse number="35">ಆದುದರಿಂದ ನಿನ್ನೊಳಗಿರುವ ಬೆಳಕಿಗೆ ಕತ್ತಲೆ ಕವಿಯದಂತೆ ಎಚ್ಚರಿಕೆ ವಹಿಸು.</verse>
				<verse number="36">ದೇಹದ ಯಾವುದೊಂದು ಭಾಗದಲ್ಲೂ ಕತ್ತಲೆಯಿಲ್ಲದೆ ದೇಹವೆಲ್ಲ ಕಾಂತಿಮಯವಾಗಿದ್ದರೆ, ದೀಪವು ತನ್ನ ಪ್ರಕಾಶದಿಂದ ನಿನ್ನನ್ನು ಬೆಳಗಿಸುವಂತೆ, ನಿನ್ನ ದೇಹದಾದ್ಯಂತವೂ ದೇದೀಪ್ಯಮಾನವಾಗಿರುವುದು,” ಎಂದರು.</verse>
				<verse number="37">ಯೇಸುಸ್ವಾಮಿ ತಮ್ಮ ಬೋಧನೆಯನ್ನು ಮುಗಿಸಿದಾಗ, ಫರಿಸಾಯನೊಬ್ಬನು ಅವರನ್ನು ಊಟಕ್ಕೆ ಆಮಂತ್ರಿಸಿದನು. ಯೇಸು ಒಳಕ್ಕೆ ಹೋಗಿ ಊಟಕ್ಕೆ ಕುಳಿತುಕೊಂಡರು.</verse>
				<verse number="38">ಊಟಕ್ಕೆ ಮುಂಚೆ ಅವರು ಕೈ ತೊಳೆಯದೆಹೋದುದನ್ನು ಕಂಡು ಫರಿಸಾಯನು ಚಕಿತನಾದನು.</verse>
				<verse number="39">ಆಗ ಯೇಸು, “ಫರಿಸಾಯರಾದ ನೀವು ಲೋಟ ಹಾಗೂ ಊಟದ ತಟ್ಟೆಗಳ ಹೊರಭಾಗವನ್ನು ಶುಚಿಮಾಡುತ್ತೀರಿ; ಆದರೆ ನಿಮ್ಮ ಒಳಭಾಗವು ಲೋಭದಿಂದಲೂ ಕೆಡುಕಿನಿಂದಲೂ ತುಂಬಿದೆ.</verse>
				<verse number="40">ಮೂರ್ಖರೇ, ಹೊರಭಾಗವನ್ನು ಮಾಡಿದಾತನು ಒಳಭಾಗವನ್ನೂ ಮಾಡಲಿಲ್ಲವೇ?</verse>
				<verse number="41">ನಿಮ್ಮ ತಟ್ಟೆ, ಲೋಟಗಳಲ್ಲಿ ಇರುವುದನ್ನು ಮೊಟ್ಟಮೊದಲು ದಾನಮಾಡಿರಿ. ಆಗ ಸಮಸ್ತವು ನಿಮಗೆ ಶುದ್ಧಿಯಾಗಿರುವುದು.</verse>
				<verse number="42">“ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪುದಿನ, ಸದಾಪು ಮುಂತಾದ ಪಲ್ಯಗಳಲ್ಲೂ ಹತ್ತರಲ್ಲಿ ಒಂದು ಪಾಲು ಸಲ್ಲಿಸುತ್ತೀರಿ, ಸರಿ. ಆದರೆ ನ್ಯಾಯನೀತಿಯನ್ನೂ ದೇವರ ಪ್ರೀತಿಯನ್ನೂ ಬದಿಗೊತ್ತಿದ್ದೀರಿ. ನೀವು ಅವುಗಳನ್ನು ಅಲಕ್ಷ್ಯಮಾಡದೆ, ಇವುಗಳನ್ನು ಅನುಷ್ಠಾನಕ್ಕೆ ತರಬೇಕಾಗಿತ್ತು.</verse>
				<verse number="43">“ಫರಿಸಾಯರೇ ನಿಮಗೆ ಧಿಕ್ಕಾರ! ಪ್ರಾರ್ಥನಾ ಮಂದಿರಗಳಲ್ಲಿ ಪ್ರಧಾನ ಆಸನಗಳನ್ನೂ ಪೇಟೆಬೀದಿಗಳಲ್ಲಿ ವಂದನೋಪಚಾರಗಳನ್ನೂ ಅಪೇಕ್ಷಿಸುತ್ತೀರಿ.</verse>
				<verse number="44">ಅಯ್ಯೋ, ನಿಮಗೆ ಧಿಕ್ಕಾರ! ನೀವು ನೆಲಸಮವಾದ ಸಮಾಧಿಗಳಂತೆ ಇದ್ದೀರಿ. ಸಮಾಧಿಗಳೆಂದು ತಿಳಿಯದೆಯೆ ಜನರು ಅವುಗಳ ಮೇಲೆ ನಡೆದಾಡುತ್ತಾರೆ,” ಎಂದರು.</verse>
				<verse number="45">ಇದನ್ನು ಕೇಳಿದ ಒಬ್ಬ ಧರ್ಮಶಾಸ್ತ್ರಜ್ಞನು, “ಬೋಧಕರೇ, ನೀವು ಹೀಗೆ ಮಾತನಾಡುವುದರಿಂದ ನಮ್ಮನ್ನೂ ಖಂಡಿಸಿದಂತಾಯಿತು,” ಎಂದನು.</verse>
				<verse number="46">ಅದಕ್ಕೆ ಯೇಸು, “ಶಾಸ್ತ್ರಜ್ಞರೇ, ನಿಮಗೂ ಧಿಕ್ಕಾರ! ಹೊರಲಾಗದ ಹೊರೆಗಳನ್ನು ನೀವು ಜನರ ಮೇಲೆ ಹೇರುತ್ತೀರಿ; ನೀವಾದರೋ ನಿಮ್ಮ ಕಿರುಬೆರಳಿನಿಂದ ಕೂಡ ಅವುಗಳನ್ನು ಮುಟ್ಟುವುದಿಲ್ಲ.</verse>
				<verse number="47">ನಿಮಗೆ ಧಿಕ್ಕಾರ! ನಿಮ್ಮ ಪಿತೃಗಳು ಕೊಂದುಹಾಕಿದ ಪ್ರವಾದಿಗಳಿಗೆ ನೀವು ಅಂದದ ಗೋರಿಗಳನ್ನು ನಿರ್ಮಿಸುತ್ತೀರಿ.</verse>
				<verse number="48">ನಿಮ್ಮ ಪಿತೃಗಳ ಕೃತ್ಯಗಳನ್ನು ನೀವು ಅನುಮೋದಿಸುತ್ತೀರಿ ಎಂಬುದಕ್ಕೆ ಇದೇ ಸಾಕ್ಷಿ. ಏಕೆಂದರೆ, ಪ್ರವಾದಿಗಳನ್ನು ಕೊಂದವರು ಅವರಾದರೆ, ಗೋರಿ ನಿರ್ಮಿಸುತ್ತಿರುವವರು ನೀವು.</verse>
				<verse number="49">ಈ ಕಾರಣದಿಂದಲೇ ‘ದೇವರ ಜ್ಞಾನವು’ ಹೇಳಿರುವುದೇನೆಂದರೆ - ‘ನಾನು ಅವರ ಬಳಿಗೆ ಪ್ರವಾದಿಗಳನ್ನೂ ಪ್ರೇಷಿತರನ್ನೂ ಕಳುಹಿಸುವೆನು; ಅವರಲ್ಲಿ ಕೆಲವರನ್ನು ಕೊಲೆಮಾಡುವರು; ಕೆಲವರನ್ನು ಚಿತ್ರಹಿಂಸೆಪಡಿಸುವರು.</verse>
				<verse number="50">ಲೋಕಾದಿಯಿಂದ ಸುರಿಸಲಾದ ಎಲ್ಲಾ ಪ್ರವಾದಿಗಳ ರಕ್ತಕ್ಕೂ ಅಂದರೆ, ಹೇಬೆಲನ ರಕ್ತ ಮೊದಲ್ಗೊಂಡು, ಬಲಿಪೀಠಕ್ಕೂ ದೇವಾಲಯಕ್ಕೂ ನಡುವೆ ಹತನಾದ ಜಕರೀಯನ ರಕ್ತದವರೆಗೂ ಈ ಪೀಳಿಗೆಯವರು ಲೆಕ್ಕಕೊಡಬೇಕಾಗುವುದು.’ ಹೌದು, ಈ ಪೀಳಿಗೆಯವರೇ ಲೆಕ್ಕಕೊಡಬೇಕಾಗುವುದೆಂದು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ.</verse>
				<verse number="51"></verse>
				<verse number="52">ಧರ್ಮಶಾಸ್ತ್ರಜ್ಞರೇ, ನಿಮಗೆ ಧಿಕ್ಕಾರ! ಜ್ಞಾನವೆಂಬ ಮಂದಿರದ ಬೀಗದ ಕೈಯನ್ನು ನಿಮ್ಮಲ್ಲೇ ಇಟ್ಟುಕೊಂಡಿದ್ದೀರಿ. ನೀವು ಒಳಕ್ಕೆ ಪ್ರವೇಶಿಸುವುದಿಲ್ಲ; ಪ್ರವೇಶಿಸಲು ಯತ್ನಿಸುವವರನ್ನೂ ತಡೆಗಟ್ಟುತ್ತೀರಿ,” ಎಂದರು.</verse>
				<verse number="53">ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಧರ್ಮಶಾಸ್ತ್ರಿಗಳೂ ಫರಿಸಾಯರೂ ಅವರನ್ನು ಉಗ್ರವಾಗಿ ಪ್ರತಿಭಟಿಸಲಾರಂಭಿಸಿದರು. ಹಲವಾರು ವಿಷಯಗಳನ್ನು ಕುರಿತು ಮಾತಾಡುವಂತೆ ಕೆಣಕಿ,</verse>
				<verse number="54">ಅವರ ಮಾತಿನಲ್ಲಿ ಏನಾದರೂ ತಪ್ಪು ಕಂಡು ಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.</verse>
			</chapter>
			<chapter number="12">
				<verse number="1">ಇಷ್ಟರಲ್ಲೇ, ಸಾವಿರಾರು ಜನರು ಒಬ್ಬರನ್ನೊಬ್ಬರು ಒತ್ತರಿಸುತ್ತಾ ಕಿಕ್ಕಿರಿದು ನೆರೆದಿದ್ದರು. ಯೇಸು ಮೊದಲು ಶಿಷ್ಯರನ್ನು ಉದ್ದೇಶಿಸಿ, “ಫರಿಸಾಯರ ‘ಹುಳಿಹಿಟ್ಟಿನ’ ಬಗ್ಗೆ. ಅಂದರೆ ಅವರ ಕಪಟತನದ ಬಗ್ಗೆ, ಎಚ್ಚರಿಕೆಯಿಂದಿರಿ.</verse>
				<verse number="2">ಮುಚ್ಚುಮರೆಯಾಗಿರುವುದೆಲ್ಲಾ ಬಟ್ಟಬಯಲಾಗುವುದು; ಗುಟ್ಟಾಗಿರುವುದೆಲ್ಲಾ ರಟ್ಟಾಗುವುದು.</verse>
				<verse number="3">ನೀವು ಕತ್ತಲಲ್ಲಿ ಹೇಳಿದ್ದೆಲ್ಲವನ್ನು ಬೆಳಕಿನಲ್ಲಿ ಕೇಳಲಾಗುವುದು; ಒಳಕೋಣೆಗಳಲ್ಲಿ ಕಿವಿಮಾತಾಗಿ ನೀವು ಹೇಳಿದ್ದೆಲ್ಲವನ್ನು ಮನೆಮಾಳಿಗೆಗಳ ಮೇಲಿಂದ ಸಾರಲಾಗುವುದು,” ಎಂದರು.</verse>
				<verse number="4">“ಗೆಳೆಯರೇ, ನನ್ನ ಮಾತಿಗೆ ಕಿವಿಗೊಡಿ; ದೇಹವನ್ನು ಕೊಂದುಹಾಕುವವರಿಗೆ ಭಯಪಡಬೇಡಿ. ಕೊಂದುಹಾಕಿದ ಮೇಲೆ ಹೆಚ್ಚೇನು ಮಾಡಲು ಅವರಿಂದಾಗದು.</verse>
				<verse number="5">ನೀವು ಯಾರಿಗೆ ಭಯಪಡಬೇಕೆಂದು ಹೇಳುತ್ತೇನೆ, ಕೇಳಿ: ಸತ್ತಮೇಲೆ ನರಕದೊಳಕ್ಕೆ ದಬ್ಬಲು ಅಧಿಕಾರವುಳ್ಳಾತನಿಗೆ ಭಯಪಡಿ. ಹೌದು, ಆತನಿಗೆ ಭಯಪಡಿರೆಂದು ನಿಮಗೆ ಒತ್ತಿಹೇಳುತ್ತೇನೆ.</verse>
				<verse number="6">“ಎರಡು ಕಾಸಿಗೆ ಐದು ಗುಬ್ಬಚ್ಚಿಗಳನ್ನು ಮಾರುವುದಿಲ್ಲವೇ? ಆದರೂ ಅವುಗಳಲ್ಲಿ ಒಂದನ್ನೂ ದೇವರು ಮರೆಯುವುದಿಲ್ಲ.</verse>
				<verse number="7">ಅಷ್ಟುಮಾತ್ರವಲ್ಲ, ನಿಮ್ಮ ತಲೆಗೂದಲುಗಳು ಸಹ ಎಲ್ಲವೂ ಎಣಿಕೆಯಾಗಿವೆ. ಭಯಪಡಬೇಡಿ; ಅನೇಕ ಗುಬ್ಬಚ್ಚಿಗಳಿಗಿಂತ ನೀವು ಎಷ್ಟೋ ಮೌಲ್ಯವುಳ್ಳವರು.</verse>
				<verse number="8">“ಯಾವನು ಜನರ ಮುಂದೆ ಬಹಿರಂಗವಾಗಿ ತಾನು ನನ್ನವನೆಂದು ಒಪ್ಪಿಕೊಳ್ಳುತ್ತಾನೋ, ಅವನನ್ನು ನರಪುತ್ರನು ಸಹ ದೇವದೂತರ ಮುಂದೆ ತನ್ನವನೆಂದು ಒಪ್ಪಿಕೊಳ್ಳುವನು.</verse>
				<verse number="9">ಆದರೆ ಯಾವನು ತಾನು ನನ್ನವನಲ್ಲ ಎಂದು ಜನರ ಮುಂದೆ ಬಹಿರಂಗವಾಗಿ ನಿರಾಕರಿಸುತ್ತಾನೋ, ಅವನನ್ನು ದೇವದೂತರ ಮುಂದೆ ನಿರಾಕರಿಸಲಾಗುವುದೆಂಬುದು ನಿಶ್ಚಯ.</verse>
				<verse number="10">“ಯಾವನಾದರೂ ನರಪುತ್ರನ ವಿರುದ್ಧ ಮಾತನಾಡಿದರೆ ಅವನಿಗೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮ ಅವರನ್ನು ದೂಷಿಸುವವನಿಗೆ ಕ್ಷಮೆಯೇ ದೊರಕದು.</verse>
				<verse number="11">“ಪ್ರಾರ್ಥನಾಮಂದಿರಗಳಿಗೆ ಮತ್ತು ನ್ಯಾಯಾಧಿಪತಿಗಳ ಹಾಗೂ ದೇಶಾಧಿಕಾರಿಗಳ ಮುಂದೆ ನಿಮ್ಮನ್ನು ಎಳೆದೊಯ್ಯುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ.</verse>
				<verse number="12">ಏಕೆಂದರೆ, ನೀವು ಹೇಳತಕ್ಕದ್ದನ್ನು ಪವಿತ್ರಾತ್ಮ ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡುವರು,” ಎಂದರು.</verse>
				<verse number="13">ಜನಸಮೂಹದಿಂದ ಒಬ್ಬನು, “ಬೋಧಕರೇ, ನಮ್ಮ ಪಿತ್ರಾರ್ಜಿತ ಸೊತ್ತನ್ನು ನನಗೆ ಭಾಗಮಾಡಿಕೊಡುವಂತೆ ನನ್ನ ಸೋದರನಿಗೆ ಹೇಳಿ,” ಎಂದು ಕೇಳಿಕೊಂಡನು.</verse>
				<verse number="14">ಅದಕ್ಕೆ ಯೇಸು, “ಏನಯ್ಯಾ, ನಿಮ್ಮಿಬ್ಬರ ನ್ಯಾಯತೀರಿಸುವುದಕ್ಕೂ ನಿಮ್ಮ ಸ್ವತ್ತನ್ನು ಭಾಗಮಾಡಿಕೊಡುವುದಕ್ಕೂ ನನ್ನನ್ನು ನೇಮಿಸಿದವರು ಯಾರು?” ಎಂದು ಮರುಪ್ರಶ್ನೆ ಹಾಕಿದರು.</verse>
				<verse number="15">ಅನಂತರ ಜನರನ್ನುದ್ದೇಶಿಸಿ, “ಎಚ್ಚರಿಕೆ, ಯಾವ ವಿಧವಾದ ಲೋಭಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಏಕೆಂದರೆ, ಒಬ್ಬನಿಗೆ ಎಷ್ಟೇ ಸಿರಿಸಂಪತ್ತಿರಲಿ, ಅವನ ನಿಜವಾದ ಜೀವನ ಅದನ್ನು ಅವಲಂಬಿಸಿಲ್ಲ,” ಎಂದು ಹೇಳಿದರು.</verse>
				<verse number="16">ಅನಂತರ ಅವರಿಗೆ ಈ ಸಾಮತಿಯನ್ನು ಹೇಳಿದರು: “ಒಬ್ಬ ಧನಿಕನಿದ್ದ. ಅವನ ಭೂಮಿ ಒಮ್ಮೆ ಸಮೃದ್ಧಿಯಾದ ಬೆಳೆ ಕೊಟ್ಟಿತು.</verse>
				<verse number="17">ಆಗ ಅವನು, ‘ನನ್ನ ಬೆಳೆಯನ್ನೆಲ್ಲಾ ತುಂಬಿಡಲು ಸ್ಥಳವಿಲ್ಲವಲ್ಲಾ, ಏನು ಮಾಡಲಿ?’ ಎಂದು ತನ್ನಲ್ಲೇ ಆಲೋಚಿಸುತ್ತಾ,</verse>
				<verse number="18">‘ಹೌದು, ಹೀಗೆ ಮಾಡುತ್ತೇನೆ: ಇರುವ ಕಣಜಗಳನ್ನು ಕಿತ್ತುಹಾಕಿಸಿ, ಇನ್ನೂ ದೊಡ್ಡವುಗಳನ್ನು ಕಟ್ಟಿಸುತ್ತೇನೆ. ಅಲ್ಲಿ ನನ್ನ ಎಲ್ಲಾ ದವಸಧಾನ್ಯಗಳನ್ನೂ ಸರಕುಸಾಮಗ್ರಿಗಳನ್ನೂ ತುಂಬಿಸಿಡುತ್ತೇನೆ.</verse>
				<verse number="19">ಅಲ್ಲದೆ, “ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ, ಆರಾಮವಾಗಿರು. ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ\,’ ಎಂದುಕೊಂಡ.</verse>
				<verse number="20">ಆಗ ದೇವರು, ‘ಎಲವೋ ಮೂರ್ಖ, ಇದೇ ರಾತ್ರಿ ನೀನು ಸಾಯಬೇಕಾಗಿದೆ, ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದರು.</verse>
				<verse number="21">“ತನಗೋಸ್ಕರ ಸಂಪತ್ತನ್ನು ಶೇಖರಿಸಿ ಇಟ್ಟುಕೊಂಡು ದೇವರ ದೃಷ್ಟಿಯಲ್ಲಿ ಧನಿಕನಲ್ಲದವನು ಇವನಿಗೆ ಸಮಾನನು,” ಎಂದರು ಯೇಸು.</verse>
				<verse number="22">ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಈ ಕಾರಣದಿಂದ ನೀವು ನಿಮ್ಮ ‘ಪ್ರಾಣಧಾರಣೆಗೆ ಏನು ಉಣ್ಣುವುದು, ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ.</verse>
				<verse number="23">ಏತಕ್ಕೆಂದರೆ ಊಟಕ್ಕಿಂತ ಪ್ರಾಣ, ಉಡುಪಿಗಿಂತ ದೇಹ ಮೇಲಾದುದು.</verse>
				<verse number="24">ಕಾಗೆಗಳನ್ನು ಗಮನಿಸಿರಿ; ಅವು ಬಿತ್ತುವುದಿಲ್ಲ, ಕೊಯ್ಯುವುದಿಲ್ಲ. ಅವುಗಳಿಗೆ ಉಗ್ರಾಣವೂ ಇಲ್ಲ, ಕಣಜವೂ ಇಲ್ಲ. ಆದರೂ ದೇವರು ಅವುಗಳನ್ನು ಪೋಷಿಸುತ್ತಾರೆ. ಪಕ್ಷಿಗಳಿಗಿಂತ ನೀವು ಎಷ್ಟೋ ಮೇಲಾದವರು!</verse>
				<verse number="25">ಚಿಂತಿಸಿ, ಚಿಂತಿಸಿ, ನಿಮ್ಮ ಜೀವನಾವಧಿಯನ್ನು ಕೊಂಚಕಾಲವಾದರೂ ದೀರ್ಘಮಾಡಲು ನಿಮ್ಮಲ್ಲಿ ಯಾರಿಂದಾದೀತು?</verse>
				<verse number="26">ಇಂಥ ಅಲ್ಪಕಾರ್ಯಗಳನ್ನು ಮಾಡಲು ನೀವು ಅಶಕ್ತರಾಗಿ ಇರುವಾಗ, ಮಿಕ್ಕವುಗಳನ್ನು ಕುರಿತು ಚಿಂತಿಸುವುದೇಕೆ?</verse>
				<verse number="27">ವನಕುಸುಮಗಳು ಬೆಳೆಯುವ ರೀತಿಯನ್ನು ಗಮನಿಸಿ ನೋಡಿ: ಅವು ದುಡಿಯುವುದಿಲ್ಲ; ನೂಲುವುದಿಲ್ಲ. ಆದರೂ ಅರಸ ಸೊಲೊಮೋನನು ತನ್ನ ಸರ್ವವೈಭವದಲ್ಲಿ ಇದ್ದಾಗಲೂ, ಈ ಕುಸುಮಗಳಲ್ಲಿ ಒಂದರಷ್ಟೂ ಸುಂದರವಾದ ಉಡುಪನ್ನು ಧರಿಸಿರಲಿಲ್ಲ.</verse>
				<verse number="28">ಎಲೈ ಅಲ್ಪವಿಶ್ವಾಸಿಗಳೇ, ಇಂದಿದ್ದು ನಾಳೆ ಒಲೆಪಾಲಾಗುವ ಬಯಲಿನ ಹುಲ್ಲಿಗೇ ದೇವರು ಹೀಗೆ ಉಡಿಸಿದರೆ, ನಿಮಗೆ ಇನ್ನೆಷ್ಟು ಮಾಡಲಾರರು!</verse>
				<verse number="29">ಅಲ್ಲದೆ, ಅನ್ನಪಾನಗಳಿಗೆ ಏನು ಮಾಡೋಣ ಎಂದು ತೊಳಲಾಡಬೇಡಿ, ಪೇಚಾಡಬೇಡಿ.</verse>
				<verse number="30">ಇವೆಲ್ಲವುಗಳಿಗಾಗಿ ಲೌಕಿಕ ಜನರು ಅರಸಿ ಅಲೆದಾಡುತ್ತಾರೆ. ಇವು ನಿಮಗೆ ಅಗತ್ಯವೆಂದು ನಿಮ್ಮ ತಂದೆಗೆ ತಿಳಿದಿದೆ.</verse>
				<verse number="31">ನೀವಾದರೋ ದೇವರ ಸಾಮ್ರಾಜ್ಯಕ್ಕಾಗಿ ತವಕಪಡಿರಿ. ಇದರ ಸಮೇತ ಅವು ಕೂಡ ನಿಮಗೆ ಕೊಡಲಾಗುವುವು.</verse>
				<verse number="32">“ಪುಟ್ಟಮಂದೆಯೇ, ಭಯಪಡಬೇಡ. ನಿನ್ನ ತಂದೆ ತಮ್ಮ ಸಾಮ್ರಾಜ್ಯವನ್ನು ನಿನಗೆ ನೀಡಲು ಇಷ್ಟಪಟ್ಟಿದ್ದಾರೆ.</verse>
				<verse number="33">ನಿಮ್ಮ ಆಸ್ತಿಪಾಸ್ತಿಗಳನ್ನು ಮಾರಿ, ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ; ಲಯವಾಗದ ಸಂಪತ್ತನ್ನು ಸ್ವರ್ಗದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಅಲ್ಲಿ ಅದು ಕಳ್ಳನಿಗೆ ದಕ್ಕುವಂತಿಲ್ಲ; ನುಸಿಹಿಡಿದು ನಾಶವಾಗುವಂತಿಲ್ಲ.</verse>
				<verse number="34">ನಿಮ್ಮ ನಿಧಿ ಎಲ್ಲಿದೆಯೋ ಅಲ್ಲೇ ಇರುವುದು ನಿಮ್ಮ ಹೃದಯ.</verse>
				<verse number="35">“ನಿಮ್ಮ ನಡು ಕಟ್ಟಿರಲಿ; ನಿಮ್ಮ ದೀಪ ಉರಿಯುತ್ತಿರಲಿ.</verse>
				<verse number="36">ತಟ್ಟಿದ ತಕ್ಷಣ ಯಜಮಾನನಿಗೆ ಬಾಗಿಲು ತೆರೆಯಲು ಸಿದ್ಧರಿರುವ ಸೇವಕರಂತೆ ಇರಿ. ತಮ್ಮ ಯಜಮಾನನು ಮದುವೆ ಔತಣ ಮುಗಿಸಿಕೊಂಡು ಯಾವಾಗ ಹಿಂದುರುಗುತ್ತಾನೋ, ಎಂದು ಅವರು ಎದುರು ನೋಡುತ್ತಾ ಇರುತ್ತಾರೆ.</verse>
				<verse number="37">ಯಜಮಾನನು ಬಂದು ಯಾವ ಯಾವ ಸೇವಕ ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುತ್ತಾನೋ, ಅಂಥವರು ಭಾಗ್ಯವಂತರು. ಏಕೆಂದರೆ, ಯಜಮಾನನೇ ನಡುಕಟ್ಟಿನಿಂತು, ಅವರನ್ನು ಊಟಕ್ಕೆ ಕೂರಿಸಿ, ಒಬ್ಬೊಬ್ಬನಿಗೂ ತಾನೇ ಉಪಚಾರ ಮಾಡುವನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.</verse>
				<verse number="38">“ಯಜಮಾನನು ಬರುವಾಗ ನಡುರಾತ್ರಿ ಆಗಿರಲಿ, ಮುಂಜಾವವಾಗಿರಲಿ, ಎಚ್ಚರದಿಂದ ಇರುವ ಸೇವಕರನ್ನು ಆತನು ಕಂಡರೆ ಅವರು ಭಾಗ್ಯವಂತರು.</verse>
				<verse number="39">ಕಳ್ಳನು ಬರುವ ಗಳಿಗೆಯು ಮನೆಯ ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ.</verse>
				<verse number="40">ಇದನ್ನು ಚೆನ್ನಾಗಿ ತಿಳಿದುಕೊಂಡು ನೀವು ಸಹ ಸಿದ್ಧರಾಗಿರಿ. ಏಕೆಂದರೆ, ನರಪುತ್ರನು ನೀವು ನಿರೀಕ್ಷಿಸದ ಗಳಿಗೆಯಲ್ಲಿ ಬರುವನು,” ಎಂದರು.</verse>
				<verse number="41">ಆಗ ಪೇತ್ರನು, “ಪ್ರಭೂ, ನೀವು ಹೇಳಿದ ಈ ಸಾಮತಿ ನಮಗೆ ಮಾತ್ರ ಅನ್ವಯಿಸುತ್ತದೋ ಅಥವಾ ಎಲ್ಲರಿಗೋ” ಎಂದು ಕೇಳಿದನು.</verse>
				<verse number="42">ಅದಕ್ಕೆ ಪ್ರಭು ಹೀಗೆಂದರು: “ಪ್ರಾಮಾಣಿಕನೂ ವಿವೇಕಿಯೂ ಆದ ಮೇಸ್ತ್ರಿ ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನು ನೇಮಿಸಿದ್ದ ಮೇಸ್ತ್ರಿಯೇ.</verse>
				<verse number="43">ಯಜಮಾನನು ಮನೆಗೆ ಹಿಂದಿರುಗಿ ಬಂದಾಗ ಆ ಸೇವಕನು ತನ್ನ ಕರ್ತವ್ಯವನ್ನು ನಿಷ್ಠೆಯಿಂದ ನೆರವೇರಿಸುತ್ತಿದ್ದರೆ ಅವನು ಧನ್ಯನು.</verse>
				<verse number="44">ಅಂಥವನನ್ನು ಯಜಮಾನನು ತನ್ನ ಎಲ್ಲ ಆಸ್ತಿಪಾಸ್ತಿಗೆ ಆಡಳಿತಗಾರನನ್ನಾಗಿ ನೇಮಿಸುವನೆಂದು ನಿಮಗೆ ನಿಜವಾಗಿ ಹೇಳುತ್ತೇನೆ.</verse>
				<verse number="45">“ಆದರೆ ಆ ಸೇವಕನು ತನ್ನಲ್ಲೇ, ‘ನನ್ನ ಯಜಮಾನ ಬಹಳ ತಡಮಾಡಿ ಬರುತ್ತಾನೆ,’ ಎಂದುಕೊಂಡು ಗಂಡಾಳು ಹೆಣ್ಣಾಳು ಎನ್ನದೆ ಹೊಡೆಯುವುದಕ್ಕೂ ಅಮಲೇರುವಷ್ಟು ತಿಂದು ಕುಡಿಯುವುದಕ್ಕೂ ತೊಡಗಿದರೆ</verse>
				<verse number="46">ಅವನು ನಿರೀಕ್ಷಿಸದ ದಿನದಲ್ಲಿ, ತಿಳಿಯದ ಗಳಿಗೆಯಲ್ಲಿ ಯಜಮಾನನು ಬಂದು ಅವನನ್ನು ಚಿತ್ರಹಿಂಸೆಗೂ ವಿಶ್ವಾಸವಿಹೀನರ ದುರ್ಗತಿಗೂ ಗುರಿಮಾಡುವನು.</verse>
				<verse number="47">“ಸೇವಕನು ಯಜಮಾನನ ಇಷ್ಟಾರ್ಥವನ್ನು ಅರಿತುಕೊಂಡಿದ್ದರೂ ಅಜಾಗರೂಕನಾಗಿ ಇದ್ದರೆ ಕಠಿಣ ಶಿಕ್ಷೆಗೆ ಗುರಿಯಾಗುತ್ತಾನೆ.</verse>
				<verse number="48">ಅರಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ವಹಿಸಿಕೊಂಡವನಿಂದ ಇನ್ನೂ ಹೆಚ್ಚಾಗಿ ಕೇಳಲಾಗುವುದು.</verse>
				<verse number="49">“ನಾನು ಬಂದಿರುವುದು ಜಗತ್ತಿನಲ್ಲಿ ಬೆಂಕಿಯನ್ನು ಹೊತ್ತಿಸಲು. ಅದು ಈಗಾಗಲೇ ಉರಿಯುತ್ತಿರಬೇಕೆಂಬುದೇ ನನ್ನ ಬಯಕೆ.</verse>
				<verse number="50">ಆದರೆ ನಾನು ಪಡೆಯಬೇಕಾದ ಶ್ರಮಾಸ್ನಾನ ಒಂದುಂಟು. ಅದು ಈಡೇರುವ ತನಕ ನನಗೆ ನೆಮ್ಮದಿಯಿಲ್ಲ.</verse>
				<verse number="51">ನಾನು ಲೋಕಕ್ಕೆ ಸಮಾಧಾನವನ್ನು ತರಲು ಬಂದೆ ಎಂದು ಭಾವಿಸುತ್ತೀರೋ? ಇಲ್ಲ. ಭಿನ್ನಭೇದಗಳನ್ನು ಉಂಟುಮಾಡಲು ಬಂದೆನೆಂದು ನಿಮಗೆ ಒತ್ತಿ ಹೇಳುತ್ತೇನೆ.</verse>
				<verse number="52">ಹೇಗೆಂದರೆ, ಒಂದೇ ಮನೆಯಲ್ಲಿರುವ ಐವರಲ್ಲಿ, ಇಂದಿನಿಂದ ಇಬ್ಬರಿಗೆ ವಿರುದ್ಧ ಮೂವರು, ಮೂವರಿಗೆ ವಿರುದ್ಧ ಇಬ್ಬರು ವಿಭಾಗವಾಗುವರು.</verse>
				<verse number="53">ಮಗನಿಗೆ ವಿರುದ್ಧವಾಗಿ ತಂದೆ, ಮಗಳಿಗೆ ವಿರುದ್ಧವಾಗಿ ತಾಯಿ, ಸೊಸೆಗೆ ವಿರುದ್ಧವಾಗಿ ಅತ್ತೆ, ಪರಸ್ಪರ ವಿರೋಧವಾಗಿ ವಿಂಗಡಿಸಿ ಹೋಗುವರು,” ಎಂದರು.</verse>
				<verse number="54">ಇದೂ ಅಲ್ಲದೆ ಯೇಸುಸ್ವಾಮಿ ಜನಸಮೂಹವನ್ನು ನೋಡಿ, “ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೇ, ‘ಭಾರಿ ಮಳೆ ಬರುತ್ತದೆ’ ಎನ್ನುತ್ತೀರಿ; ಹಾಗೆಯೇ ಆಗುತ್ತದೆ.</verse>
				<verse number="55">ದಕ್ಷಿಣ ದಿಕ್ಕಿನ ಗಾಳಿ ಬೀಸಿದಾಗ ಉರಿಬಿಸಿಲು ಎನ್ನುತ್ತೀರಿ; ಅಂತೆಯೇ ಇರುತ್ತದೆ.</verse>
				<verse number="56">ಆಷಾಢಭೂತಿಗಳೇ, ಭೂಮ್ಯಾಕಾಶಗಳ ಲಕ್ಷಣಗಳನ್ನು ನೀವು ಸರಿಯಾಗಿ ಅರಿತುಕೊಳ್ಳಬಲ್ಲಿರಿ. ಆದರೆ ಪ್ರಸ್ತುತ ಕಾಲವನ್ನು ಅರ್ಥಮಾಡಿಕೊಳ್ಳಲಾರಿರಾ?</verse>
				<verse number="57">“ನ್ಯಾಯನಿರ್ಣಯವನ್ನು ನಿಮ್ಮಲ್ಲಿಯೇ ನೀವು ಏಕೆ ಮಾಡಿಕೊಳ್ಳಬಾರದು?</verse>
				<verse number="58">ನೀನು ನ್ಯಾಯಾಧಿಪತಿಯ ಬಳಿಗೆ ಹೋಗಬೇಕಾಗಿ ಬಂದಲ್ಲಿ, ದಾರಿಯಲ್ಲೇ ನಿನ್ನ ವಿರೋಧಿಯೊಡನೆ ವ್ಯಾಜ್ಯ ತೀರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಮುಂದೆ ಎಳೆದೊಯ್ಯಬಹುದು; ನ್ಯಾಯಾಧಿಪತಿ ನಿನ್ನನ್ನು ಸೆರೆಯ ಅಧಿಕಾರಿಯ ಕೈಗೊಪ್ಪಿಸಬಹುದು. ಸೆರೆ ಅಧಿಕಾರಿ ನಿನ್ನನ್ನು ಸೆರೆಮನೆಯಲ್ಲಿ ಹಾಕಬಹುದು.</verse>
				<verse number="59">ಅಲ್ಲಿಂದ ನೀನು ಹೊರಗೆ ಬರಬೇಕಾದರೆ ಕಡೇ ಕಾಸನ್ನೂ ಬಿಡದೆ ಎಲ್ಲವನ್ನೂ ಸಲ್ಲಿಸಬೇಕಾಗುವುದೆಂಬುದು ನಿಶ್ಚಯ,” ಎಂದರು.</verse>
			</chapter>
			<chapter number="13">
				<verse number="1">ಅದೇ ಸಮಯಕ್ಕೆ ಅಲ್ಲಿದ್ದವರಲ್ಲಿ ಕೆಲವರು ಯೇಸುಸ್ವಾಮಿಯ ಬಳಿಗೆ ಬಂದು, ಬಲಿಯರ್ಪಿಸುತ್ತಾ ಇದ್ದ ಗಲಿಲೇಯದವರನ್ನು ಪಿಲಾತನು ಕೊಲ್ಲಿಸಿದನೆಂಬ ವಿಷಯವನ್ನು ತಿಳಿಸಿದರು.</verse>
				<verse number="2">ಅದಕ್ಕೆ ಯೇಸು, “ಇಂಥಾ ಕೊಲೆಗೆ ಈಡಾದವರು ಇತರ ಎಲ್ಲ ಗಲಿಲೇಯದವರಿಗಿಂತ ಹೆಚ್ಚು ಪಾಪಿಗಳೆಂದು ಭಾವಿಸುತ್ತೀರೋ?</verse>
				<verse number="3">ಹಾಗೆ ಭಾವಿಸಕೂಡದು. ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದೆಹೋದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ.</verse>
				<verse number="4">ಶಿಲೊವಾ ಎಂಬಲ್ಲಿ ಗೋಪುರ ಕುಸಿದು ಬಿದ್ದಾಗ ಹದಿನೆಂಟು ಜನ ಸತ್ತರಲ್ಲವೆ? ಅವರು ಜೆರುಸಲೇಮಿನಲ್ಲಿ ವಾಸವಾಗಿರುವ ಇತರ ಎಲ್ಲಾ ಜನರಿಗಿಂತ ಹೆಚ್ಚು ದೋಷಿಗಳಾಗಿದ್ದರೆಂದು ಭಾವಿಸಿತ್ತೀರೋ?</verse>
				<verse number="5">ಹಾಗಲ್ಲ, ನೀವು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗದಿದ್ದರೆ, ಅವರ ಹಾಗೆಯೇ ನೀವೂ ನಾಶವಾಗುವಿರಿ,” ಎಂದರು.</verse>
				<verse number="6">ಅನಂತರ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು: “ಒಬ್ಬನು ತನ್ನ ದ್ರಾಕ್ಷಿತೋಟದಲ್ಲಿ ಒಂದು ಅಂಜೂರದ ಮರವನ್ನು ನೆಡಿಸಿದ್ದ. ಒಮ್ಮೆ ಅವನು ಬಂದು ಅದರಲ್ಲಿ ಹಣ್ಣನ್ನು ಹುಡುಕಲು ಒಂದೂ ಕಾಣಿಸಲಿಲ್ಲ.</verse>
				<verse number="7">ತೋಟಗಾರನನ್ನು ಕರೆದು, ‘ನೋಡು, ಮೂರು ವರ್ಷಗಳಿಂದ ಈ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಇದ್ದೇನೆ. ಒಂದಾದರೂ ಕಂಡುಬರಲಿಲ್ಲ. ಇನ್ನು ಇದನ್ನು ಕಡಿದುಹಾಕು. ಭೂಮಿಗೆ ಭಾರವಾಗಿ ಅದರ ಸಾರವನ್ನು ಇದೇಕೆ ವ್ಯರ್ಥ ಮಾಡಬೇಕು?’ ಎಂದು ಹೇಳಿದ.</verse>
				<verse number="8">ಅದಕ್ಕೆ ತೋಟಗಾರನು, ‘ಸ್ವಾಮೀ, ಈ ಒಂದು ವರ್ಷ ಇದು ಹಾಗೆಯೇ ಇರಲಿ ಬಿಡಿ. ಅಷ್ಟರಲ್ಲಿ ಸುತ್ತಲೂ ಪಾತಿ ತೆಗೆದು ಗೊಬ್ಬರ ಹಾಕುತ್ತೇನೆ.</verse>
				<verse number="9">ಮುಂದಿನ ವರ್ಷ ಹಣ್ಣು ಬಿಟ್ಟರೆ ಸರಿ; ಇಲ್ಲದಿದ್ದರೆ ಕಡಿದುಹಾಕೋಣ,’ ಎಂದನು.”</verse>
				<verse number="10">ಒಂದು ಸಬ್ಬತ್‍ದಿನ ಯೇಸುಸ್ವಾಮಿ ಪ್ರಾರ್ಥನಾಮಂದಿರದಲ್ಲಿ ಬೋಧಿಸುತ್ತಿದ್ದರು.</verse>
				<verse number="11">ಹದಿನೆಂಟು ವರ್ಷಗಳಿಂದ ದೆವ್ವಪೀಡಿತಳಾಗಿ ನರಳುತ್ತಿದ್ದ ಒಬ್ಬ ಮಹಿಳೆ ಅಲ್ಲಿದ್ದಳು. ಆಕೆ ಒಬ್ಬ ಗೂನಿ; ನೆಟ್ಟಗೆ ನಿಲ್ಲಲು ಸ್ವಲ್ಪವೂ ಆಗುತ್ತಿರಲಿಲ್ಲ.</verse>
				<verse number="12">ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು, “ನೋಡಮ್ಮ, ನೀನು ವ್ಯಾಧಿಯಿಂದ ಬಿಡುಗಡೆಯಾದೆ,” ಎಂದು ಹೇಳಿ,</verse>
				<verse number="13">ಆಕೆಯ ಮೇಲೆ ತಮ್ಮ ಹಸ್ತಗಳನ್ನಿಟ್ಟರು. ತಕ್ಷಣವೇ ಆಕೆ ನೆಟ್ಟಗಾದಳು ಮತ್ತು ದೇವರಿಗೆ ಸ್ತುತಿಸ್ತೋತ್ರ ಸಲ್ಲಿಸಿದಳು.</verse>
				<verse number="14">ಯೇಸು ಸಬ್ಬತ್‍ದಿನದಲ್ಲಿ ಗುಣಮಾಡಿದ್ದನ್ನು ಕಂಡು, ಪ್ರಾರ್ಥನಾಮಂದಿರದ ಅಧಿಕಾರಿ ಕುಪಿತನಾದನು. ಕೂಡಿದ್ದ ಜನರನ್ನು ಉದ್ದೇಶಿಸಿ, “ಕೆಲಸ ಮಾಡಲು ಆರು ದಿನಗಳಿವೆ, ಆ ದಿನಗಳಲ್ಲಿ ಬಂದು ಗುಣಮಾಡಿಸಿಕೊಳ್ಳಿರಿ; ಸಬ್ಬತ್‍ದಿನದಲ್ಲಿ ಮಾತ್ರ ಕೂಡದು,” ಎಂದನು.</verse>
				<verse number="15">ಪ್ರಭು, ಅವನಿಗೆ ಪ್ರತ್ಯುತ್ತರವಾಗಿ, “ಕಪಟಿಗಳೇ, ಸಬ್ಬತ್‍ದಿನ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಕತ್ತೆಯನ್ನಾಗಲಿ, ಎತ್ತನ್ನಾಗಲಿ ಕೊಟ್ಟಿಗೆಯಿಂದ ಬಿಚ್ಚಿ ನೀರಿಗೆ ಹಿಡಿದುಕೊಂಡು ಹೋಗುವುದಿಲ್ಲವೆ?</verse>
				<verse number="16">ಅಬ್ರಹಾಮನ ವಂಶಜಳಾದ ಈಕೆಯನ್ನು ಸೈತಾನನು ಹದಿನೆಂಟು ವರ್ಷಗಳಿಂದ ಕಟ್ಟಿಹಾಕಿದ್ದನು; ಈ ಕಟ್ಟಿನಿಂದ ಈಕೆಯನ್ನು ಸಬ್ಬತ್‍ದಿನ ಬಿಡಿಸಬಾರದಿತ್ತೆ?” ಎಂದರು.</verse>
				<verse number="17">ಈ ಉತ್ತರವನ್ನು ಕೇಳಿ ಯೇಸುವಿನ ವಿರೋಧಿಗಳೆಲ್ಲರೂ ನಾಚಿದರು. ಜನರ ಕೂಟವಾದರೋ ಅವರು ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಕಂಡು ಸಂತೋಷಪಟ್ಟಿತು.</verse>
				<verse number="18">ಆಗ ಯೇಸುಸ್ವಾಮಿ, “ದೇವರ ಸಾಮ್ರಾಜ್ಯವು ಏನನ್ನು ಹೋಲುತ್ತದೆ?</verse>
				<verse number="19">ಅದನ್ನು ಯಾವುದಕ್ಕೆ ಹೋಲಿಸಲಿ? ಅದು ಒಂದು ಸಾಸಿವೆಕಾಳಿನಂತೆ ಇದೆ. ಒಬ್ಬನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಬಿತ್ತಿದನು. ಅದು ಬೆಳೆದು ಮರವಾಯಿತು. ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ರೆಂಬೆಗಳಲ್ಲಿ ಗೂಡುಕಟ್ಟಿ ವಾಸಮಾಡತೊಡಗಿದವು,” ಎಂದರು.</verse>
				<verse number="20">ಪುನಃ ಯೇಸುಸ್ವಾಮಿ, “ದೇವರ ಸಾಮ್ರಾಜ್ಯವನ್ನು ಯಾವುದಕ್ಕೆ ಹೋಲಿಸಲಿ?</verse>
				<verse number="21">ಅದು ಹುಳಿಹಿಟ್ಟಿನಂತೆ ಇದೆ. ಅದನ್ನು ಒಬ್ಬಾಕೆ ತೆಗೆದುಕೊಂಡು ಮೂರು ಸೇರು ಹಿಟ್ಟಿನಲ್ಲಿ ಕಲಸಿದಳು. ಆ ಹಿಟ್ಟೆಲ್ಲಾ ಹುಳಿಯಾಯಿತು,” ಎಂದರು.</verse>
				<verse number="22">ಯೇಸುಸ್ವಾಮಿ ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಉಪದೇಶಮಾಡಿಕೊಂಡು ಜೆರುಸಲೇಮಿನತ್ತ ಪ್ರಯಾಣಮಾಡುತ್ತಿದ್ದರು.</verse>
				<verse number="23">ಆಗ ಒಬ್ಬನು, “ಸ್ವಾಮೀ, ಜೀವೋದ್ಧಾರ ಹೊಂದುವವರು ಕೆಲವರು ಮಾತ್ರವೊ?” ಎಂದು ವಿಚಾರಿಸಿದನು.</verse>
				<verse number="24">ಆಗ ಯೇಸು ಜನರಿಗೆ, “ಇಕ್ಕಟ್ಟಾದ ಬಾಗಿಲಿನಿಂದಲೇ ಒಳಹೋಗಲು ಸರ್ವಪ್ರಯತ್ನ ಮಾಡಿ. ಏಕೆಂದರೆ, ಅನೇಕರು ಒಳಕ್ಕೆ ಹೋಗಲು ಖಂಡಿತವಾಗಿ ಪ್ರಯತ್ನಿಸುವರು; ಆದರೆ ಅದು ಅವರಿಂದಾಗದು.</verse>
				<verse number="25">ಮನೆಯ ಯಜಮಾನನು ಎದ್ದು ಬಾಗಿಲನ್ನು ಮುಚ್ಚಿದ ಮೇಲೆ ನೀವು ಹೊರಗಡೆ ನಿಲ್ಲಬೇಕಾಗುವುದು. ಬಾಗಿಲನ್ನು ತಟ್ಟುತ್ತಾ, ‘ಸ್ವಾಮೀ, ನಮಗೆ ಬಾಗಿಲು ತೆರೆಯಿರಿ,’ ಎಂದು ನೀವು ಕೇಳುವಿರಿ. ಅದಕ್ಕೆ ಅವನು, ‘ನೀವು ಎಲ್ಲಿಯವರೋ ನಾನು ಅರಿಯೆ’ ಎನ್ನುವನು.</verse>
				<verse number="26">ಆಗ ನೀವು, ‘ನಿಮ್ಮೊಂದಿಗೆ ನಾವು ಊಟಮಾಡಿದ್ದೇವೆ, ಪಾನಮಾಡಿದ್ದೇವೆ; ನೀವು ನಮ್ಮ ಬೀದಿಗಳಲ್ಲಿ ಉಪದೇಶಮಾಡಿದ್ದೀರಿ,’ ಎಂದು ಹೇಳಲಾರಂಭಿಸುವಿರಿ.</verse>
				<verse number="27">ಆದರೆ ಅವನು ಪುನಃ, ‘ನೀವು ಎಲ್ಲಿಯವರೋ ನಾನರಿಯೆ. ಅಕ್ರಮಿಗಳೇ, ಎಲ್ಲರೂ ನನ್ನಿಂದ ತೊಲಗಿರಿ,’ ಎಂದು ಸ್ಪಷ್ಟವಾಗಿ ನುಡಿಯುವನು.</verse>
				<verse number="28">ಅಬ್ರಹಾಮ, ಇಸಾಕ, ಯಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ಸಾಮ್ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ನೋಡುವಾಗ ನಿಮಗಾಗುವ ಗೋಳಾಟವೇನು! ಹಲ್ಲು ಕಡಿತವೇನು!!</verse>
				<verse number="29">ಚತುರ್ದಿಕ್ಕುಗಳಿಂದಲೂ ಜನರು ಬಂದು, ದೇವರ ಸಾಮ್ರಾಜ್ಯದ ಹಬ್ಬದೂಟದಲ್ಲಿ ಭಾಗಿಗಳಾಗುವರು.</verse>
				<verse number="30">“ಇಗೋ, ಕಡೆಯವರಲ್ಲಿ ಕೆಲವರು ಮೊದಲಿಗರಾಗುವರು. ಮೊದಲಿಗರಲ್ಲಿ ಕೆಲವರು ಕಡೆಯವರಾಗುವರು,” ಎಂದರು.</verse>
				<verse number="31">ಅದೇ ಸಮಯಕ್ಕೆ ಸರಿಯಾಗಿ ಕೆಲವು ಮಂದಿ ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, “ಇಲ್ಲಿಂದ ಹೊರಟು ಹೋಗಿಬಿಡಿ, ಹೆರೋದನು ನಿಮ್ಮನ್ನು ಕೊಲ್ಲಬೇಕೆಂದಿದ್ದಾನೆ,” ಎಂದರು.</verse>
				<verse number="32">ಅದಕ್ಕೆ ಯೇಸು, “ನೀವು ಹೋಗಿ ಆ ನರಿಗೆ ಹೀಗೆಂದು ತಿಳಿಸಿರಿ: ಇಂದು ಮತ್ತು ನಾಳೆ ದೆವ್ವಗಳನ್ನು ಬಿಡಿಸುತ್ತೇನೆ, ರೋಗಿಗಳನ್ನು ಗುಣಪಡಿಸುತ್ತೇನೆ, ಮೂರನೆಯ ದಿನ ನನ್ನ ಕಾರ್ಯಸಿದ್ಧಿಗೆ ಬರುವುದು.</verse>
				<verse number="33">ಹೇಗೂ ಇಂದು, ನಾಳೆ ಮತ್ತು ನಾಡಿದ್ದು ನಾನು ನನ್ನ ಮಾರ್ಗವನ್ನು ಮುಂದುವರಿಸಬೇಕು. ಪ್ರವಾದಿಯಾದವನು ಜೆರುಸಲೇಮಿನ ಹೊರಗೆ ಕೊಲೆಗೀಡಾಗುವುದು ಸಲ್ಲದು.</verse>
				<verse number="34">“ಓ ಜೆರುಸಲೇಮೇ, ಜೆರುಸಲೇಮೇ, ಪ್ರವಾದಿಗಳ ಕೊಲೆಪಾತಕಿಯೇ, ದೇವರು ನಿನ್ನ ಬಳಿಗೆ ಕಳುಹಿಸಿದವರನ್ನು ಕಲ್ಲುಗಳಿಂದ ಹೊಡೆಯುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳಡಿ ಸೇರಿಸಿಕೊಳ್ಳುವಂತೆ, ನಾನು ನಿನ್ನ ಮಕ್ಕಳನ್ನು ಒಂದಾಗಿ ಸೇರಿಸಿ ಅಪ್ಪಿಕೊಳ್ಳಲು ಎಷ್ಟೋ ಬಾರಿ ಅಪೇಕ್ಷಿಸಿದೆ.</verse>
				<verse number="35">ಆದರೆ ನೀನು ಒಪ್ಪಲಿಲ್ಲ. ಇಗೋ, ನಿಮ್ಮ ದೇವಾಲಯ ಪಾಳುಬೀಳುವುದು. ‘ಸರ್ವೇಶ್ವರನ ನಾಮದಲ್ಲಿ ಬರುವವರು ಧನ್ಯರು,’ ಎಂದು ನೀವಾಗಿ ಹೇಳುವ ದಿನದವರೆಗೂ ನೀವು ನನ್ನನ್ನು ಕಾಣಲಾರಿರಿ, ಎಂಬುದು ನಿಶ್ಚಯ,” ಎಂದರು.</verse>
			</chapter>
			<chapter number="14">
				<verse number="1">ಅಂದು ಸಬ್ಬತ್‍ದಿನ. ಯೇಸುಸ್ವಾಮಿ ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದರು. ಎಲ್ಲರ ಕಣ್ಣು ಅವರ ಮೇಲಿತ್ತು.</verse>
				<verse number="2">ಅಲ್ಲೇ ಅವರ ಮುಂದೆ ಜಲೋದರ ರೋಗಿಯೊಬ್ಬನು ಇದ್ದನು.</verse>
				<verse number="3">“ಸಬ್ಬತ್‍ದಿನ ಗುಣಪಡಿಸುವುದು ಸರಿಯೋ ತಪ್ಪೋ?” ಎಂದು ಯೇಸು ಫರಿಸಾಯರನ್ನೂ ಶಾಸ್ತ್ರಜ್ಞರನ್ನೂ ಕೇಳಿದರು.</verse>
				<verse number="4">ಅದಕ್ಕವರು ಮೌನವಾಗಿದ್ದರು. ಯೇಸು ರೋಗಿಯ ಕೈ ಹಿಡಿದು ಗುಣಪಡಿಸಿ ಕಳಿಸಿಬಿಟ್ಟರು.</verse>
				<verse number="5">ಅನಂತರ, “ನಿಮ್ಮಲ್ಲಿ ಒಬ್ಬನ ಮಗನಾಗಲಿ, ಎತ್ತಾಗಲಿ ಬಾವಿಯಲ್ಲಿ ಬಿದ್ದರೆ, ಸಬ್ಬತ್‍ದಿನವಾಗಿದ್ದರೂ ನೀವು ತಡಮಾಡದೆ ಮೇಲಕ್ಕೆ ಎತ್ತುವುದಿಲ್ಲವೆ?” ಎಂದು ಕೇಳಿದರು.</verse>
				<verse number="6">ಅದಕ್ಕೂ ಅವರು ನಿರುತ್ತರರಾದರು.</verse>
				<verse number="7">ಅಲ್ಲದೆ, ಅಲ್ಲಿಗೆ ಬಂದಿದ್ದ ಅತಿಥಿಗಳು ಪಂಕ್ತಿಯಲ್ಲಿ ಉತ್ತಮ ಸ್ಥಾನಗಳನ್ನು ಆರಿಸಿಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಯೇಸು ಸಾಮತಿ ರೂಪದಲ್ಲಿ ಹೀಗೆಂದರು:</verse>
				<verse number="8">“ಮದುವೆಯ ಔತಣಕ್ಕೆ ನಿನ್ನನ್ನು ಯಾರಾದರೂ ಆಹ್ವಾನಿಸಿದಾಗ ಪ್ರಧಾನ ಆಸನದಲ್ಲಿ ಹೋಗಿ ಕುಳಿತುಕೊಳ್ಳಬೇಡ. ಏಕೆಂದರೆ, ನಿನಗಿಂತ ಗೌರವಸ್ಥನನ್ನು ಆಹ್ವಾನಿಸಿರಬಹುದು.</verse>
				<verse number="9">ನಿಮ್ಮಿಬ್ಬರನ್ನು ಕರೆದಾತ ನಿನ್ನ ಹತ್ತಿರಬಂದು, ‘ಇವನಿಗೆ ನಿನ್ನ ಸ್ಥಳವನ್ನು ಬಿಟ್ಟುಕೊಡು,’ ಎನ್ನಬಹುದು. ಆಗ ನೀನು ನಾಚಿಕೆಪಟ್ಟುಕೊಂಡು ಕಡೆಯ ಸ್ಥಾನದಲ್ಲಿ ಹೋಗಿ ಕುಳಿತುಕೊಳ್ಳಬೇಕಾಗಬಹುದು.</verse>
				<verse number="10">ಅದಕ್ಕೆ ಬದಲಾಗಿ ನಿನ್ನನ್ನು ಆಹ್ವಾನಿಸಿದಾಗ ಕಡೆಯ ಸ್ಥಳದಲ್ಲಿ ಹೋಗಿ ಕುಳಿತುಕೋ. ಕರೆದವನು ಬಂದು, ‘ಗೆಳೆಯಾ, ಮೇಲೆ ಬಾ’ ಎಂದು ಹೇಳುವನು. ಆಗ ಜೊತೆಗೆ ಕುಳಿತಿರುವ ಅತಿಥಿಗಳೆಲ್ಲರ ಮುಂದೆ ನಿನಗೆ ಗೌರವ ಸಿಗುವುದು.</verse>
				<verse number="11">ಅಂತೆಯೇ, ತನ್ನನ್ನು ತಾನೇ ಮೇಲಕ್ಕೆ ಏರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು; ತನ್ನನ್ನು ತಾನೇ ತಗ್ಗಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು.</verse>
				<verse number="12">ಅನಂತರ ತಮ್ಮನ್ನು ಊಟಕ್ಕೆ ಆಮಂತ್ರಿಸಿದವನನ್ನು ನೋಡಿ ಯೇಸುಸ್ವಾಮಿ, “ನೀನು ಊಟ ಅಥವಾ ಔತಣವನ್ನು ಏರ್ಪಡಿಸುವಾಗ ನಿನ್ನ ಸ್ನೇಹಿತರನ್ನಾಗಲಿ, ಸೋದರರನ್ನಾಗಲಿ, ಬಂಧುಬಳಗದವರನ್ನಾಗಲಿ, ಧನಿಕರಾದ ನೆರೆಯವರನ್ನಾಗಲಿ ಕರೆಯಬೇಡ. ಏಕೆಂದರೆ, ಅವರು ನಿನ್ನನ್ನು ಪ್ರತಿಯಾಗಿ ಕರೆದು ಮುಯ್ಯಿತೀರಿಸಿ ಬಿಡಬಹುದು.</verse>
				<verse number="13">ಆದ್ದರಿಂದ ಔತಣವನ್ನು ಏರ್ಪಡಿಸುವಾಗ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆ;</verse>
				<verse number="14">ಆಗ ನೀನು ಧನ್ಯನಾಗುವೆ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ಸತ್ಪುರುಷರು ಪುನರುತ್ಥಾನ ಹೊಂದುವಾಗ ದೇವರೇ ನಿನಗೆ ಸಲ್ಲಬೇಕಾದುದನ್ನು ಸಲ್ಲಿಸುವರು,” ಎಂದರು.</verse>
				<verse number="15">ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನು ಯೇಸುಸ್ವಾಮಿ ಹೇಳಿದ್ದನ್ನು ಕೇಳಿ, “ದೇವರ ಸಾಮ್ರಾಜ್ಯದ ಔತಣದಲ್ಲಿ ಭಾಗಿಯಾಗುವವನು ಎಷ್ಟೋ ಧನ್ಯನು!” ಎಂದನು.</verse>
				<verse number="16">ಯೇಸು ಅವನಿಗೆ ಈ ಸಾಮತಿ ಹೇಳಿದರು: “ಒಬ್ಬಾತ ಒಂದು ದೊಡ್ಡ ಔತಣವನ್ನೇರ್ಪಡಿಸಿ ಅನೇಕ ಜನರಿಗೆ ಆಹ್ವಾನವಿತ್ತ.</verse>
				<verse number="17">ಊಟಕ್ಕೆ ವೇಳೆಯಾದಾಗ, ‘ಈಗ ಎಲ್ಲಾ ಸಿದ್ಧವಾಗಿದೆ ಬನ್ನಿ,’ ಎಂದು ಹೇಳಿ ಆಹ್ವಾನಿತರನ್ನು ಕರೆದುತರಲು ಸೇವಕರನ್ನು ಕಳಿಸಿದ.</verse>
				<verse number="18">ಆದರೆ ಆಹ್ವಾನಿತರೆಲ್ಲರೂ ಒಬ್ಬರಾದ ಮೇಲೊಬ್ಬರು ‘ಕ್ಷಮಿಸಬೇಕು,’ ಎಂದು ಹೇಳಲಾರಂಭಿಸಿದರು.</verse>
				<verse number="19">ಒಬ್ಬ, ‘ಕ್ಷಮಿಸಬೇಕು, ಒಂದು ಹೊಲ ಕೊಂಡುಕೊಂಡಿದ್ದೇನೆ, ಅಲ್ಲಿಗೆ ಹೋಗಿ ನೋಡಬೇಕಾಗಿದೆ,’ ಎಂದ.</verse>
				<verse number="20">ಇನ್ನೊಬ್ಬ, ‘ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸಲು ಹೋಗುತ್ತಿದ್ದೇನೆ. ನನ್ನನ್ನು ಕ್ಷಮಿಸಬೇಕು,’ ಎಂದ. ಮತ್ತೊಬ್ಬ, ‘ನನಗೆ ಈಗ ತಾನೆ ಮದುವೆ ಆಗಿದೆ, ಬರುವುದಕ್ಕಾಗುವುದಿಲ್ಲ,’ ಎಂದನು.</verse>
				<verse number="21">“ಆ ಸೇವಕನು ಬಂದು ಯಜಮಾನನಿಗೆ ಹಾಗೆಯೇ ವರದಿ ಮಾಡಿದ.</verse>
				<verse number="22">ಇದನ್ನು ಕೇಳಿ ಯಜಮಾನನಿಗೆ ರೋಷಬಂದಿತು. ಅವನು ಸೇವಕನಿಗೆ, ‘ಪಟ್ಟಣದ ಹಾದಿಬೀದಿಗಳಿಗೂ ಸಂದುಗೊಂದುಗಳಿಗೂ ಹೋಗಿ ದರಿದ್ರರು, ಅಂಗವಿಕಲರು, ಕುಂಟರು, ಕುರುಡರು ಇಂಥವರನ್ನು ಕರೆದುಕೊಂಡು ಬಾ,’ ಎಂದು ಆಜ್ಞೆಮಾಡಿದ.</verse>
				<verse number="23">ಸೇವಕನು ಬಂದು, ‘ಸ್ವಾಮೀ, ನಿಮ್ಮ ಆಜ್ಞೆಯಂತೆ ಮಾಡಿದ್ದಾಯಿತು; ಆದರೆ ಇನ್ನೂ ಸ್ಥಳವಿದೆ,’ ಎಂದು ಹೇಳಿದ. ಅದಕ್ಕೆ ಯಜಮಾನ ‘ಹಾಗಾದರೆ ಹಳ್ಳಿಹಾದಿಗಳಿಗೂ ಎಲ್ಲೆ ಬೇಲಿಗಳವರೆಗೂ ಹೋಗಿ ಕಂಡಕಂಡವರನ್ನು ಒತ್ತಾಯ ಮಾಡಿ ಕರೆದುಕೊಂಡು ಬಾ. ನನ್ನ ಮನೆ ತುಂಬಿಹೋಗಲಿ.</verse>
				<verse number="24">ಆದರೆ ಮೊದಲು ಆಹ್ವಾನಿತರಾದವರಲ್ಲಿ ಒಬ್ಬನೂ ನಾನು ಮಾಡಿಸಿದ ಅಡುಗೆಯ ರುಚಿ ನೋಡಬಾರದು!’ ಎಂದು ಸ್ಪಷ್ಟಪಡಿಸಿದ.”</verse>
				<verse number="25">ಜನರು ಗುಂಪುಗುಂಪಾಗಿ ಯೇಸುಸ್ವಾಮಿಯ ಸಂಗಡ ಹೋಗುತ್ತಿದ್ದರು. ಆಗ ಯೇಸು ಅವರ ಕಡೆಗೆ ತಿರುಗಿ ಹೀಗೆಂದರು:</verse>
				<verse number="26">“ನನ್ನಲ್ಲಿಗೆ ಬರುವ ಯಾರೊಬ್ಬನು ತನ್ನ ತಂದೆ-ತಾಯಿ, ಹೆಂಡತಿ-ಮಕ್ಕಳು, ಸೋದರ-ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು.</verse>
				<verse number="27">ತನ್ನ ಶಿಲುಬೆಯನ್ನು ಹೊತ್ತು ನನ್ನ ಹಿಂದೆ ಬರದವನು ನನ್ನ ಶಿಷ್ಯನಾಗಲಾರನು.</verse>
				<verse number="28">ನಿಮ್ಮಲ್ಲಿ ಒಬ್ಬನು ಒಂದು ಗೋಪುರವನ್ನು ಕಟ್ಟಲು ಇಚ್ಛಿಸಿದರೆ, ಕೆಲಸವನ್ನು ಮುಗಿಸಲು ತನ್ನಿಂದ ಸಾಧ್ಯವೇ ಎಂದು ನೋಡಲು, ಮೊದಲು ಕುಳಿತು, ಬೇಕಾಗುವ ಖರ್ಚುವೆಚ್ಚವನ್ನು ಲೆಕ್ಕಹಾಕುವುದಿಲ್ಲವೇ?</verse>
				<verse number="29">ಇಲ್ಲದೆಹೋದರೆ, ಇವನು ಅಸ್ತಿವಾರ ಹಾಕಿದ ಮೇಲೆ ಕೆಲಸ ಪೂರೈಸದೆ ಇರುವುದನ್ನು ಕಂಡು,</verse>
				<verse number="30">‘ಕಟ್ಟಲಾರಂಭಿಸಿದ; ಮುಗಿಸಲು ಇವನಿಂದಾಗಲಿಲ್ಲ!’ ಎಂದು ನೋಡುವವರೆಲ್ಲರೂ ಅವನನ್ನು ಪರಿಹಾಸ್ಯಮಾಡುವರು.</verse>
				<verse number="31">ಹಾಗೆಯೇ, ಅರಸನೊಬ್ಬನು ಇನ್ನೊಬ್ಬ ಅರಸನ ವಿರುದ್ಧ ಯುದ್ಧಕ್ಕೆ ಹೋಗುವುದಕ್ಕೆ ಮುಂಚೆ ಇಪ್ಪತ್ತು ಸಾವಿರ ಸೈನ್ಯದೊಡನೆ ಬರುವ ಶತ್ರುವನ್ನು ತನ್ನ ಹತ್ತು ಸಾವಿರ ಸೈನ್ಯದಿಂದ ಎದುರಿಸಲು ಸಾಧ್ಯವೇ ಎಂದು ಮೊದಲು ಕುಳಿತು ಆಲೋಚನೆ ಮಾಡುವುದಿಲ್ಲವೇ?</verse>
				<verse number="32">ಸಾಧ್ಯವಿಲ್ಲದಿದ್ದರೆ, ಶತ್ರು ರಾಜನು ದೂರದಲ್ಲಿರುವಾಗಲೇ ದೂತರನ್ನು ಕಳುಹಿಸಿ, ಸಂಧಾನಕ್ಕೆ ಷರತ್ತುಗಳೇನೆಂದು ವಿಚಾರಿಸುತ್ತಾನೆ.</verse>
				<verse number="33">ಅದೇ ಮೇರೆಗೆ, ನಿಮ್ಮಲ್ಲಿ ಯಾವನು ತನಗಿರುವುದನ್ನೆಲ್ಲಾ ಪರಿತ್ಯಾಗ ಮಾಡುವುದಿಲ್ಲವೋ ಅವನು ನನ್ನ ಶಿಷ್ಯನಾಗಲಾರ.</verse>
				<verse number="34">“ಉಪ್ಪೇನೋ ಪ್ರಯೋಜನಕರ. ಆದರೆ ಉಪ್ಪೇ ಸಪ್ಪಗಾದರೆ ಅದಕ್ಕೆ ಇನ್ನಾವುದರಿಂದ ಪುನಃ ರುಚಿ ಬಂದೀತು?</verse>
				<verse number="35">ಇನ್ನು ಅದು ಭೂಮಿಗೇ ಆಗಲಿ, ತಿಪ್ಪೆಗುಂಡಿಗೇ ಆಗಲಿ ಉಪಯೋಗವಾಗದು. ಜನರು ಅದನ್ನು ಹೊರಗೆ ಬಿಸಾಡುತ್ತಾರಷ್ಟೆ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ!” ಎಂದರು.</verse>
			</chapter>
			<chapter number="15">
				<verse number="1">ಯೇಸುಸ್ವಾಮಿಯ ಉಪದೇಶವನ್ನು ಕೇಳಲು ಎಲ್ಲಾ ಸುಂಕದವರೂ ಪಾಪಿಗಳೂ ಬರುತ್ತಿದ್ದರು.</verse>
				<verse number="2">ಇದನ್ನು ಕಂಡ ಫರಿಸಾಯರು ಮತ್ತು ಧರ್ಮಶಾಸ್ತ್ರಿಗಳು, “ಈ ಮನುಷ್ಯ ಪಾಪಿಗಳನ್ನು ಬರಮಾಡಿಕೊಳ್ಳುತ್ತಾನೆ; ಅವರೊಡನೆ ಊಟಮಾಡುತ್ತಾನೆ,” ಎಂದು ಗೊಣಗಿದರು.</verse>
				<verse number="3">ಆ ಸಂದರ್ಭದಲ್ಲಿ ಯೇಸು ಈ ಸಾಮತಿಯನ್ನು ಹೇಳಿದರು:</verse>
				<verse number="4">“ನಿಮ್ಮಲ್ಲಿ ಯಾರ ಬಳಿಯಾದರೂ ನೂರು ಕುರಿಗಳು ಇವೆ ಎನ್ನೋಣ. ಅವುಗಳಲ್ಲಿ ಒಂದು ಕುರಿ ಕಾಣದೆಹೋದಾಗ ಅವನೇನು ಮಾಡುತ್ತಾನೆ? ಇರುವ ತೊಂಬತ್ತೊಂಬತ್ತು ಕುರಿಗಳನ್ನು ಹುಲ್ಲುಗಾವಲಿನಲ್ಲೇ ಬಿಟ್ಟು ಕಾಣದೆಹೋದ ಆ ಒಂದು ಕುರಿ ಸಿಕ್ಕುವ ತನಕ ಹುಡುಕಿಕೊಂಡು ಹೋಗುತ್ತಾನಲ್ಲವೆ?</verse>
				<verse number="5">ಅದು ಸಿಕ್ಕಿದಾಗ ಸಿಕ್ಕಿತೆಂಬ ಸಂತೋಷದಿಂದ ಅದನ್ನು ಹೆಗಲ ಮೇಲೆ ಎತ್ತಿಕೊಂಡು ಮನೆಗೆ ಬರುತ್ತಾನೆ;</verse>
				<verse number="6">ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಿಗೆ ಕರೆಯುತ್ತಾನೆ. ‘ಕಳೆದುಹೋಗಿದ್ದ ಕುರಿ ಸಿಕ್ಕಿತು; ನನ್ನೊಡನೆ ಸೇರಿ ಸಂತೋಷಪಡಿ,’ ಎನ್ನುತ್ತಾನೆ, ಅಲ್ಲವೆ?</verse>
				<verse number="7">“ಅದೇ ರೀತಿಯಲ್ಲಿ, ಪಶ್ಚಾತ್ತಾಪದ ಅವಶ್ಯಕತೆಯಿಲ್ಲದ ತೊಂಬತ್ತೊಂಬತ್ತು ಸತ್ಪುರುಷರ ವಿಷಯವಾಗಿ ಸ್ವರ್ಗದಲ್ಲಿ ಉಂಟಾಗುವ ಸಂತೋಷಕ್ಕಿಂತ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ಹೆಚ್ಚು ಸಂತೋಷ ಉಂಟಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.</verse>
				<verse number="8">“ಅಂತೆಯೇ, ಮನೆಯಾಕೆಯೊಬ್ಬಳು ತನ್ನ ಬಳಿಯಿದ್ದ ಹತ್ತು ನಾಣ್ಯಗಳಲ್ಲಿ ಒಂದನ್ನು ಕಳೆದುಕೊಂಡಳು ಎನ್ನೋಣ. ಆಗ ಅವಳೇನು ಮಾಡುತ್ತಾಳೆ? ದೀಪ ಹಚ್ಚಿ ಮನೆಯನ್ನು ಗುಡಿಸಿ, ಕಳೆದುಹೋದ ನಾಣ್ಯ ಸಿಕ್ಕುವವರೆಗೂ ಚೆನ್ನಾಗಿ ಹುಡುಕಾಡುತ್ತಾಳೆ, ಅಲ್ಲವೇ?</verse>
				<verse number="9">ಅದು ಸಿಕ್ಕಿದಾಗ ತನ್ನ ಗೆಳತಿಯರನ್ನೂ ನೆರೆಯವರನ್ನೂ ಒಟ್ಟಿಗೆ ಕರೆದು, ‘ಕಳೆದುಹೋದ ನಾಣ್ಯ ಸಿಕ್ಕಿಬಿಟ್ಟಿತು; ನನ್ನೊಡನೆ ಸೇರಿ ಸಂತೋಷಪಡಿ,’ ಎನ್ನುತ್ತಾಳಲ್ಲವೆ?</verse>
				<verse number="10">“ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.</verse>
				<verse number="11">ಯೇಸುಸ್ವಾಮಿ ಮುಂದುವರಿಸುತ್ತಾ ಈ ಸಾಮತಿಯನ್ನು ಹೇಳಿದರು: “ಒಬ್ಬಾತನಿಗೆ ಇಬ್ಬರು ಮಕ್ಕಳಿದ್ದರು.</verse>
				<verse number="12">ಅವರಲ್ಲಿ ಕಿರಿಯವನು, ‘ಅಪ್ಪಾ, ಆಸ್ತಿಯಲ್ಲಿ ನನಗೆ ಬರಬೇಕಾದ ಪಾಲನ್ನು ಕೊಟ್ಟುಬಿಡು,’ ಎಂದು ಕೇಳಿದ. ತಂದೆ ಅವರಿಬ್ಬರಿಗೂ ಆಸ್ತಿಯನ್ನು ಹಂಚಿಕೊಟ್ಟ.</verse>
				<verse number="13">ಕೆಲವು ದಿವಸಗಳಾದ ಮೇಲೆ ಕಿರಿಯ ಮಗ ತನ್ನ ಆಸ್ತಿಯನ್ನೆಲ್ಲಾ ಮಾರಿ, ಬಂದ ಹಣವನ್ನು ತೆಗೆದುಕೊಂಡು ಮನೆಬಿಟ್ಟು ಹೋದ. ದೂರದೇಶಕ್ಕೆ ಹೋಗಿ, ದುಂದು ಜೀವನ ನಡೆಸಿ ಹಣವನ್ನೆಲ್ಲಾ ಪೋಲುಮಾಡಿಬಿಟ್ಟ.</verse>
				<verse number="14">ಹೀಗೆ ಅವನು ಎಲ್ಲವನ್ನು ಹಾಳುಮಾಡಿಕೊಂಡಮೇಲೆ ಆ ದೇಶದಾದ್ಯಂತ ಘೋರವಾದ ಕ್ಷಾಮ ತಲೆದೋರಿತು.</verse>
				<verse number="15">ನಿರ್ಗತಿಕನಾದ ಅವನು ಹೋಗಿ, ಆದೇಶದ ನಿವಾಸಿಯೊಬ್ಬನನ್ನು ಆಶ್ರಯಿಸಿದ. ಆತ ಇವನನ್ನು ಹಂದಿ ಮೇಯಿಸಲು ತನ್ನ ರೊಪ್ಪಗಳಿಗೆ ಕಳುಹಿಸಿದ.</verse>
				<verse number="16">ಅಲ್ಲಿ ಹಂದಿ ತಿನ್ನುತ್ತಿದ್ದ ಕಾಳುಗಳನ್ನಾದರೂ ತಿಂದು ಹಸಿವನ್ನು ನೀಗಿಸಿಕೊಳ್ಳಲು ಹಂಬಲಿಸಿದ. ಆದರೆ ಅದನ್ನೂ ಅವನಿಗೆ ಯಾರೂ ಕೊಡಲಿಲ್ಲ.</verse>
				<verse number="17">ಆಗ ಅವನಿಗೆ ಬುದ್ಧಿ ಬಂದಿತು. ನನ್ನ ತಂದೆಯ ಮನೆಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ತಿಂದು ತೇಗುವಷ್ಟು ಆಹಾರವಿದೆ. ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಾ ಇದ್ದೇನೆ.</verse>
				<verse number="18">ನಾನು ಇದೀಗಲೇ ಹೊರಟು, ತಂದೆಯ ಬಳಿಗೆ ಹೋಗಿ, ‘ಅಪ್ಪಾ, ದೇವರಿಗೂ ನಿಮಗೂ ವಿರುದ್ಧವಾಗಿ ಪಾಪಮಾಡಿದ್ದೇನೆ; ನಿಮ್ಮ ಮಗನು ಎನಿಸಿಕೊಳ್ಳುವ ಯೋಗ್ಯತೆಯೂ ನನಗಿಲ್ಲ;</verse>
				<verse number="19">ನನ್ನನ್ನು ನಿಮ್ಮ ಮನೆಯ ಕೂಲಿಯಾಳುಗಳಲ್ಲಿ ಒಬ್ಬನನ್ನಾಗಿ ಇಟ್ಟುಕೊಳ್ಳಿ ಎಂದು ಬೇಡಿಕೊಳ್ಳುತ್ತೇನೆ,’ ಎಂದುಕೊಂಡ.</verse>
				<verse number="20">ಅಂತೆಯೇ ಎದ್ದು ತಂದೆಯ ಬಳಿಗೆ ಹೊರಟ. “ಮಗನು ಇನ್ನೂ ಅಷ್ಟು ದೂರದಲ್ಲಿ ಇರುವಾಗಲೇ ತಂದೆ ನೋಡಿದ. ಆತನ ಹೃದಯ ಕನಿಕರದಿಂದ ಕರಗಿಹೋಯಿತು. ಓಡಿಹೋಗಿ, ಮಗನನ್ನು ಬಿಗಿಯಾಗಿ ತಬ್ಬಿಕೊಂಡು ಮುತ್ತಿಟ್ಟ.</verse>
				<verse number="21">ಆದರೂ ಮಗನು, ‘ಅಪ್ಪಾ, ದೇವರಿಗೂ ನಿಮಗೂ ವಿರುದ್ಧವಾಗಿ ಪಾಪಮಾಡಿದ್ದೇನೆ; ನಿಮ್ಮ ಮಗನೆನಿಸಿಕೊಳ್ಳುವ ಯೋಗ್ಯತೆಯೂ ನನಗಿಲ್ಲ’ ಎಂದ.</verse>
				<verse number="22">ತಂದೆಯಾದರೋ ಆಳುಗಳನ್ನು ಕರೆದು, 'ಅತ್ಯುತ್ತಮವಾದ ಅಂಗಿಯನ್ನು ತಕ್ಷಣವೇ ತಂದು ಇವನಿಗೆ ಉಡಿಸಿರಿ. ಬೆರಳಿಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಪಾದರಕ್ಷೆಯನ್ನು ಮೆಟ್ಟಿಸಿರಿ;</verse>
				<verse number="23">ಕೊಬ್ಬಿಸಿದ ಪ್ರಾಣಿಯನ್ನು ತಂದು ಕೊಯ್ಯಿರಿ; ಹಬ್ಬಮಾಡೋಣ, ಆನಂದಿಸೋಣ.</verse>
				<verse number="24">ಏಕೆಂದರೆ, ಈ ನನ್ನ ಮಗ ಸತ್ತುಹೋಗಿದ್ದ, ಈಗ ಬದುಕಿ ಬಂದಿದ್ದಾನೆ. ತಪ್ಪಿಹೋಗಿದ್ದ, ಈಗ ಸಿಕ್ಕಿದ್ದಾನೆ,’ ಎಂದು ಹೇಳಿದ. ಒಡನೆಯೇ ಹಬ್ಬದ ಸಡಗರ ತೊಡಗಿತು.</verse>
				<verse number="25">“ಇತ್ತ ಹೊಲಕ್ಕೆ ಹೋಗಿದ್ದ ಹಿರಿಯ ಮಗ ಹಿಂದಿರುಗಿ ಮನೆಯನ್ನು ಸಮೀಪಿಸುವಾಗ ಗಾನ, ನರ್ತನಗಳ ಶಬ್ದವು ಅವನ ಕಿವಿಗೆ ಬಿತ್ತು.</verse>
				<verse number="26">‘ಮನೆಯಲ್ಲೇನು ವಿಶೇಷ?’ ಎಂದು ಒಬ್ಬ ಆಳನ್ನು ಕರೆದು ವಿಚಾರಿಸಿದ.</verse>
				<verse number="27">ನಿಮ್ಮ ತಮ್ಮ ಬಂದಿದ್ದಾರೆ; ಅವರು ಮರಳಿ ಸುರಕ್ಷಿತವಾಗಿ ಬಂದುದಕ್ಕಾಗಿ ಕೊಬ್ಬಿಸಿದ ಪ್ರಾಣಿಯನ್ನು ನಿಮ್ಮ ತಂದೆ ಕೊಯ್ಯಿಸಿದ್ದಾರೆ,’ ಎಂದು ಆಳು ತಿಳಿಸಿದ.</verse>
				<verse number="28">“ಇದನ್ನು ಕೇಳಿದ ಹಿರಿಯ ಮಗನಿಗೆ ಸಿಟ್ಟು ಬಂದಿತು. ಮನೆಯೊಳಕ್ಕೆ ಕಾಲಿಡಲೂ ಒಪ್ಪಲಿಲ್ಲ. ತಂದೆಯೇ ಹೊರಗೆ ಬಂದು ಬೇಡಿಕೊಂಡಾಗ</verse>
				<verse number="29">ಅವನು, ‘ನೋಡಿ, ನಾನು ಇಷ್ಟು ವರ್ಷಗಳಿಂದ ನಿಮಗೆ ಗುಲಾಮನಂತೆ ಸೇವೆಮಾಡುತ್ತಿದ್ದೇನೆ. ನಿಮ್ಮ ಮಾತನ್ನು ಎಂದೂ ಮೀರಿಲ್ಲ; ಆದರೂ ನಾನು ನನ್ನ ಸ್ನೇಹಿತರೊಡನೆ ಹಬ್ಬಮಾಡಲು ಒಂದು ಆಡುಮರಿಯನ್ನು ಕೂಡ ನೀವು ಕೊಟ್ಟಿಲ್ಲ.</verse>
				<verse number="30">ಆದರೆ ನಿಮ್ಮ ಆಸ್ತಿಪಾಸ್ತಿಯನ್ನೆಲ್ಲಾ ವೇಶ್ಯೆಯರಿಗೆ ಸುರಿದ ಈ ನಿಮ್ಮ ಮಗ ಬಂದದ್ದೇ ಕೊಬ್ಬಿಸಿದ ಪ್ರಾಣಿಯನ್ನು ಕೊಯ್ಯಿಸಿದ್ದೀರಿ!’ ಎಂದು ವಾದಿಸಿದ.</verse>
				<verse number="31">ಆಗ ತಂದೆ ಅವನಿಗೆ, ‘ಮಗನೇ, ನೀನು ಯಾವಾಗಲೂ ನನ್ನ ಸಂಗಡ ಇದ್ದೀ; ನನ್ನ ಸರ್ವಸ್ವವೂ ನಿನ್ನದೇ ಆಗಿದೆ.</verse>
				<verse number="32">ಈ ನಿನ್ನ ತಮ್ಮ ನಮ್ಮ ಪಾಲಿಗೆ ಸತ್ತುಹೋಗಿದ್ದ. ಈಗ ಬದುಕಿಬಂದಿದ್ದಾನೆ. ತಪ್ಪಿಹೋಗಿದ್ದ; ಈಗ ಸಿಕ್ಕಿದ್ದಾನೆ. ಆದುದರಿಂದ ನಾವು ಹಬ್ಬಮಾಡಿ ಆನಂದಿಸುವುದು ಸಹಜವಲ್ಲವೆ?’ ಎಂದನು.”</verse>
			</chapter>
			<chapter number="16">
				<verse number="1">ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ ಇಂತೆಂದರು: “ಒಬ್ಬ ಧನಿಕನಿದ್ದ. ಅವನ ವ್ಯವಹಾರಗಳನ್ನು ನೋಡಿಕೊಳ್ಳಲು ಒಬ್ಬ ಮೇಸ್ತ್ರಿಯಿದ್ದ. ಇವನು ಧನಿಕನ ಆಸ್ತಿಯನ್ನು ಹಾಳುಮಾಡುತ್ತಿದ್ದಾನೆಂದು ದೂರು ಬಂದಿತು.</verse>
				<verse number="2">ಧನಿಕನು ಅವನನ್ನು ಕರೆದು, ‘ಏನಿದು, ನಿನ್ನ ವಿಷಯವಾಗಿ ನಾನು ಹೀಗೆಲ್ಲ ಕೇಳುತ್ತಾ ಇದ್ದೇನೆ? ನಿನ್ನ ಕೆಲಸದ ಲೆಕ್ಕಾಚಾರವನ್ನು ಒಪ್ಪಿಸಿಬಿಡು. ಇನ್ನು ನೀನು ಮೇಸ್ತ್ರಿ ಆಗಿರಲು ಆಗದು,’ ಎಂದ.</verse>
				<verse number="3">ಆಗ ಆ ಮೇಸ್ತ್ರಿ, ‘ಈಗ ಏನುಮಾಡಲಿ? ಯಜಮಾನನು ನನ್ನನ್ನು ಕೆಲಸದಿಂದ ತೆಗೆದುಬಿಡುತ್ತಾನಲ್ಲಾ; ಅಗೆಯಲು ಶಕ್ತಿ ಸಾಲದು; ಭಿಕ್ಷೆ ಬೇಡಲು ನನಗೆ ನಾಚಿಕೆ,’ ಎಂದು ಚಿಂತಾಕ್ರಾಂತನಾದ.</verse>
				<verse number="4">ಮರುಕ್ಷಣ, ‘ಸರಿ, ಕೆಲಸದಿಂದ ನನ್ನನ್ನು ತೆಗೆದುಹಾಕಿದ ಮೇಲೆ, ಜನರು ನನ್ನನ್ನು ತಮ್ಮ ಮನೆಗೆ ಸೇರಿಸಿಕೊಳ್ಳುವಂತೆ ನಾನು ಏನು ಮಾಡಬೇಕೆಂದು ಈಗ ಗೊತ್ತಾಯಿತು,’ ಎಂದುಕೊಂಡ.</verse>
				<verse number="5">ಯಜಮಾನನ ಸಾಲಗಾರರನ್ನು ಒಬ್ಬೊಬ್ಬರನ್ನಾಗಿ ಬರಮಾಡಿಕೊಂಡು, ‘ನೀನು ನನ್ನ ಯಜಮಾನನಿಗೆ ತೀರಿಸಬೇಕಾದ ಸಾಲ ಎಷ್ಟು?’ ಎಂದು ಮೊದಲನೆಯವನನ್ನು ಕೇಳಿದ.</verse>
				<verse number="6">ಅವನು, ‘ನೂರು ಬುದ್ದಲಿ ಎಣ್ಣೆ,’ ಎಂದ. ಅದಕ್ಕೆ ಮೇಸ್ತ್ರಿ, ‘ಇಗೋ, ನಿನ್ನ ಪತ್ರ, ಕುಳಿತುಕೊಂಡು “ಐವತ್ತು” ಎಂದು ಬೇಗನೆ ಬರೆ,’ ಎಂದ.</verse>
				<verse number="7">ಬಳಿಕ ಇನ್ನೊಬ್ಬನನ್ನು ಕರೆದು, ‘ನೀನೆಷ್ಟು ಸಾಲ ತೀರಿಸಬೇಕು?’ ಎಂದು ಕೇಳಿದ. ಅವನು ‘ನೂರು ಖಂಡುಗ ಗೋದಿ’ ಎಂದಾಗ, ‘ಇಗೋ, ನಿನ್ನ ಪತ್ರ, “ಎಂಬತ್ತು” ಎಂದು ಬರೆ,’ ಎಂದ.</verse>
				<verse number="8">“ಈ ಅಪ್ರಾಮಾಣಿಕ ಮೇಸ್ತ್ರಿ ಮಾಡಿದ ಮುಂದಾಲೋಚನೆಯನ್ನು ಅವನ ಯಜಮಾನ ಪ್ರಶಂಶಿಸಿದ. ಏಕೆಂದರೆ, ತಮ್ಮ ತಮ್ಮ ವ್ಯವಹಾರಗಳಲ್ಲಿ ಲೌಕಿಕ ಜನರು ಬೆಳಕಿನ ರಾಜ್ಯದ ಜನರಿಗಿಂತ ಜಾಣರು.</verse>
				<verse number="9">ನಾನು ಹೇಳುವುದನ್ನು ಗಮನಿಸಿರಿ; ಲೌಕಿಕ ಆಸ್ತಿಪಾಸ್ತಿಯಿಂದ ಗೆಳೆಯರನ್ನು ಗಳಿಸಿಕೊಳ್ಳಿರಿ. ಅದು ವ್ಯಯವಾಗಿ ಹೋದಾಗ ನಿಮ್ಮನ್ನು ಅಮರ ನಿವಾಸಕ್ಕೆ ಸ್ವಾಗತಿಸಲಾಗುವುದು.</verse>
				<verse number="10">ಸಣ್ಣ ವಿಷಯಗಳಲ್ಲಿ ಪ್ರಾಮಾಣಿಕನಾಗಿ ನಡೆದುಕೊಳ್ಳುವವನು ದೊಡ್ಡ ವಿಷಯಗಳಲ್ಲೂ ಪ್ರಾಮಾಣಿಕನಾಗಿ ನಡೆದುಕೊಳ್ಳುತ್ತಾನೆ. ಸಣ್ಣ ವಿಷಯಗಳಲ್ಲಿ ದ್ರೋಹ ಮಾಡುವವನು ದೊಡ್ಡ ವಿಷಯಗಳಲ್ಲೂ ದ್ರೋಹಮಾಡುತ್ತಾನೆ.</verse>
				<verse number="11">ಲೌಕಿಕ ಆಸ್ತಿಪಾಸ್ತಿಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆಹೋದರೆ, ನಿಮ್ಮನ್ನು ನಂಬಿ ನೈಜ ಸಂಪತ್ತನ್ನು ನಿಮ್ಮ ವಶಕ್ಕೆ ಕೊಡುವವರಾರು?</verse>
				<verse number="12">ಇನ್ನೊಬ್ಬರಿಗೆ ಸೇರಿದ ವಸ್ತುಗಳ ವಿಷಯದಲ್ಲಿ ನೀವು ಪ್ರಾಮಾಣಿಕರಾಗಿ ನಡೆದುಕೊಳ್ಳದೆಹೋದರೆ, ನಿಮ್ಮ ಸ್ವಂತಕ್ಕೆ ಏನನ್ನಾದರೂ ಕೊಡುವವರಾರು?</verse>
				<verse number="13">“ಯಾವನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾಗದು; ಅವನು ಒಬ್ಬನನ್ನು ದ್ವೇಷಿಸಿ, ಇನ್ನೊಬ್ಬನನ್ನು ಪ್ರೀತಿಸುತ್ತಾನೆ; ಅಥವಾ ಒಬ್ಬನೊಡನೆ ಹೊಂದಿಕೊಂಡು ಇನ್ನೊಬ್ಬನನ್ನು ತಾತ್ಸಾರ ಮಾಡುತ್ತಾನೆ. ದೇವರಿಗೂ ದ್ರವ್ಯಕ್ಕೂ ಒಟ್ಟಿಗೆ ಸೇವೆಮಾಡಲು ನಿಮ್ಮಿಂದಾಗದು,” ಎಂದರು.</verse>
				<verse number="14">ಹಣದಾಶೆಯಿಂದ ಕೂಡಿದ್ದ ಫರಿಸಾಯರು ಈ ಮಾತುಗಳನ್ನೆಲ್ಲಾ ಕೇಳಿ, ಯೇಸುವನ್ನು ಪರಿಹಾಸ್ಯಮಾಡಿದರು.</verse>
				<verse number="15">ಅದಕ್ಕೆ ಯೇಸು, “ನೀವು ಮಾನವರ ಮುಂದೆ ಸತ್ಪುರುಷರೆಂದು ತೋರಿಸಿಕೊಳ್ಳುತ್ತೀರಿ; ದೇವರಾದರೋ ನಿಮ್ಮ ಅಂತರಂಗವನ್ನು ಅರಿತಿದ್ದಾರೆ. ಮಾನವರಿಗೆ ಅಮೂಲ್ಯವಾದುದು ದೇವರಿಗೆ ಅಸಹ್ಯವಾದುದು,” ಎಂದರು.</verse>
				<verse number="16">“ಧರ್ಮಶಾಸ್ತ್ರ ಹಾಗೂ ಪ್ರವಾದನೆಗಳ ಪರಿಣಾಮ ಯೊವಾನ್ನನ ಕಾಲದವರೆಗೆ ಮಾತ್ರ. ಅನಂತರ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರಲಾಗುತ್ತಿದೆ. ಸರ್ವರೂ ಈ ರಾಜ್ಯದೊಳಕ್ಕೆ ಒತ್ತರಿಸಿಕೊಂಡು ನುಗ್ಗುತ್ತಿದ್ದಾರೆ.</verse>
				<verse number="17">“ಭೂಮ್ಯಾಕಾಶಗಳು ಅಳಿದುಹೋಗಬಹುದು. ಆದರೆ ಧರ್ಮಶಾಸ್ತ್ರದಲ್ಲಿನ ಒಂದು ಚುಕ್ಕೆಯೂ ನಿರರ್ಥಕವಾಗದು.</verse>
				<verse number="18">ಹೆಂಡತಿಯನ್ನು ಬಿಟ್ಟುಬಿಟ್ಟು ಬೇರೊಬ್ಬಳನ್ನು ಮದುವೆಯಾಗುವ ಪ್ರತಿಯೊಬ್ಬನೂ ವ್ಯಭಿಚಾರಿಯಾಗುತ್ತಾನೆ. ಅಂತೆಯೇ, ಗಂಡಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರಿಯಾಗುತ್ತಾನೆ.”</verse>
				<verse number="19">“ಒಬ್ಬ ಧನಿಕನಿದ್ದ. ಬೆಲೆಬಾಳುವ ಉಡುಗೆ-ತೊಡುಗೆಗಳನ್ನೂ ನಯವಾದ ನಾರುಮಡಿಗಳನ್ನೂ ಧರಿಸಿಕೊಂಡು ದಿನನಿತ್ಯವೂ ಸುಖಭೋಗಗಳಲ್ಲಿ ಮೈಮರೆಯುತ್ತಿದ್ದ.</verse>
				<verse number="20">ಅವನ ಮನೆಯ ಬಾಗಿಲಲ್ಲೇ ಲಾಜರನೆಂಬ ಒಬ್ಬ ಭಿಕಾರಿ ಬಿದ್ದಿರುತ್ತಿದ್ದ. ಅವನ ಮೈಯೆಲ್ಲಾ ಹುಣ್ಣು.</verse>
				<verse number="21">ಧನಿಕನು ತಿಂದು ಬಿಸಾಡಿದ ಎಂಜಲಿನಿಂದ ಹಸಿವು ನೀಗಿಸಿಕೊಳ್ಳಲು ಅವನು ಹಂಬಲಿಸುತ್ತಿದ್ದ. ಅಷ್ಟುಮಾತ್ರವಲ್ಲ, ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.</verse>
				<verse number="22">“ಒಂದು ದಿನ ಆ ಭಿಕಾರಿ ಸತ್ತುಹೋದ. ದೇವದೂತರು ಅವನನ್ನು ತೆಗೆದುಕೊಂಡು ಹೋಗಿ ಸ್ವರ್ಗಸೌಭಾಗ್ಯದಲ್ಲಿದ್ದ ಅಬ್ರಹಾಮನ ಪಕ್ಕದಲ್ಲೇ ಕೂರಿಸಿದರು. ಧನಿಕನು ಕೂಡ ಸತ್ತುಹೋದ. ಅವನ ಶವಸಂಸ್ಕಾರವೂ ಮುಗಿಯಿತು.</verse>
				<verse number="23">ಪಾತಾಳದಲ್ಲಿ ಯಾತನೆಪಡುತ್ತಾ ಅವನು ಕಣ್ಣೆತ್ತಿನೋಡಿದಾಗ, ದೂರದಲ್ಲಿ ಅಬ್ರಹಾಮನನ್ನೂ ಅವನ ಪಕ್ಕದಲ್ಲೇ ಕುಳಿತಿದ್ದ ಲಾಜರನನ್ನೂ ಕಂಡ.</verse>
				<verse number="24">‘ಓ ಪಿತಾಮಹ ಅಬ್ರಹಾಮ, ನನ್ನ ಮೇಲೆ ಕನಿಕರವಿಡು. ಈ ಅಗ್ನಿಜ್ವಾಲೆಯಲ್ಲಿ ಬಾಧೆಪಡುತ್ತಿದ್ದೇನೆ; ಲಾಜರನು ತನ್ನ ತುದಿ ಬೆರಳನ್ನು ತಣ್ಣೀರಿನಲ್ಲಿ ಅದ್ದಿ, ನನ್ನ ನಾಲಗೆಗೆ ತಂಪನ್ನುಂಟುಮಾಡುವಂತೆ ಅವನನ್ನು ಇಲ್ಲಿಗೆ ಕಳುಹಿಸಿಕೊಡು’ ಎಂದು ದನಿಯೆತ್ತಿ ಮೊರೆಯಿಟ್ಟ.</verse>
				<verse number="25">ಅದಕ್ಕೆ ಅಬ್ರಹಾಮನು, ‘ಮಗನೇ, ಜೀವಮಾನದಲ್ಲಿ ಬೇಕಾದಷ್ಟು ಸುಖಸಂಪತ್ತನ್ನು ನೀನು ಅನುಭವಿಸಿದೆ; ಲಾಜರನಾದರೋ ದುಃಖ ದಾರಿದ್ರ್ಯವನ್ನು ಅನುಭವಿಸಿದ, ಎಂಬುದನ್ನು ನೆನಪಿಗೆ ತಂದುಕೊ. ಆದರೆ ಈಗ ಅವನು ಇಲ್ಲಿ ಸುಖಪಡುತ್ತಿದ್ದಾನೆ; ನೀನು ಅಲ್ಲಿ ಸಂಕಟಪಡುತ್ತಿರುವೆ.</verse>
				<verse number="26">ಅಷ್ಟೇ ಮಾತ್ರವಲ್ಲ, ನಮಗೂ ನಿಮಗೂ ನಡುವೆ ಅಗಾಧ ಪ್ರಪಾತವು ಚಾಚಿದೆ. ಆದಕಾರಣ ಈ ಕಡೆಯಿಂದ ನಿಮ್ಮ ಬಳಿಗೆ ಬರಬೇಕೆಂದಿದ್ದರೂ ಬರಲಾಗದು; ಆ ಕಡೆಯಿಂದ ನಮ್ಮ ಬಳಿಗೆ ದಾಟಿಬರಲೂ ಸಾಧ್ಯವಿಲ್ಲ,’ ಎಂದ.</verse>
				<verse number="27">ಆಗ ಆ ಧನಿಕ, ‘ಪಿತಾಮಹ ಅಬ್ರಹಾಮ, ಲಾಜರನನ್ನು ನನ್ನ ತಂದೆಯ ಮನೆಗಾದರೂ ಕಳುಹಿಸು.</verse>
				<verse number="28">ನನಗೆ ಐವರು ಸೋದರರಿದ್ದಾರೆ; ಅವರೂ ಈ ಯಾತನಾಸ್ಥಳಕ್ಕೆ ಬಾರದಂತೆ ಇವನು ಹೋಗಿ ಎಚ್ಚರಿಕೆ ಕೊಡಲಿ,’ ಎಂದು ಬೇಡಿಕೊಂಡ.</verse>
				<verse number="29">ಅದಕ್ಕೆ ಅಬ್ರಹಾಮನು, ‘ಅವರಿಗೆ ಎಚ್ಚರಿಕೆ ಕೊಡಲು ಮೋಶೆ ಮತ್ತು ಪ್ರವಾದಿಗಳ ಗ್ರಂಥಗಳಿವೆ. ಅವುಗಳಿಗೆ ಕಿವಿಗೊಡಲಿ,’ ಎಂದು ಉತ್ತರಕೊಟ್ಟ.</verse>
				<verse number="30">‘ಇಲ್ಲ, ಪಿತಾಮಹ ಅಬ್ರಹಾಮ, ಸತ್ತವರ ಕಡೆಯಿಂದ ಒಬ್ಬನು ಅವರ ಬಳಿಗೆ ಹೋದರೆ ಅವರು ಪಾಪಕ್ಕೆ ವಿಮುಖರಾಗುವರು,’ ಎಂದು ಧನಿಕನು ಮತ್ತೆ ಕೇಳಿಕೊಂಡ.</verse>
				<verse number="31">ಅದಕ್ಕೆ ಅಬ್ರಹಾಮನು, ‘ಮೋಶೆಗೂ ಪ್ರವಾದಿಗಳಿಗೂ ಅವರು ಕಿವಿಗೊಡದಿದ್ದರೆ, ಸತ್ತವನು ಜೀವಂತನಾಗಿ ಎದ್ದುಬಂದರೂ ಅವರು ನಂಬುವುದಿಲ್ಲ,’ ಎಂದ.”</verse>
			</chapter>
			<chapter number="17">
				<verse number="1">ಯೇಸುಸ್ವಾಮಿ ತಮ್ಮ ಶಿಷ್ಯರನ್ನು ಉದ್ದೇಶಿಸಿ, “ಪಾಪಪ್ರಚೋದನೆಗಳು ಬಂದೇ ಬರುತ್ತವೆ. ಆದರೆ ಅವು ಯಾರಿಂದ ಬರುತ್ತವೋ ಅವನಿಗೆ ಧಿಕ್ಕಾರ!</verse>
				<verse number="2">ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಕ್ಕೆ ಕಾರಣನಾಗುವುದಕ್ಕಿಂತ ಬೀಸುವ ಕಲ್ಲನ್ನು ಕುತ್ತಿಗೆಗೆ ಬಿಗಿಸಿಕೊಂಡು ಸಮುದ್ರದಲ್ಲಿ ದಬ್ಬಿಸಿಕೊಳ್ಳುವುದೇ ಲೇಸು.</verse>
				<verse number="3">ನೀವಾದರೋ ಎಚ್ಚರಿಕೆಯಿಂದಿರಿ! “ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಖಂಡಿಸು; ಪಶ್ಚಾತ್ತಾಪಪಟ್ಟರೆ ಕ್ಷಮಿಸಿಬಿಡು.</verse>
				<verse number="4">ಅವನು ದಿನಕ್ಕೆ ಏಳುಸಾರಿ ನಿನಗೆ ವಿರುದ್ಧ ತಪ್ಪುಮಾಡಿ ಪ್ರತಿಯೊಂದು ಸಾರಿಯೂ ಪಶ್ಚಾತ್ತಾಪಪಟ್ಟು ನಿನ್ನ ಬಳಿಗೆ ಬಂದು, ‘ಕ್ಷಮಿಸು,’ ಎಂದು ಕೇಳಿಕೊಂಡರೆ ನೀನು ಅವನನ್ನು ಕ್ಷಮಿಸಲೇಬೇಕು,’ ಎಂದರು.</verse>
				<verse number="5">“ಸ್ವಾಮೀ, ನಮ್ಮ ವಿಶ್ವಾಸವನ್ನು ಹೆಚ್ಚಿಸಿರಿ,” ಎಂದು ಪ್ರೇಷಿತರು ಕೇಳಿಕೊಂಡರು.</verse>
				<verse number="6">ಆಗ ಯೇಸುಸ್ವಾಮಿ, “ಸಾಸಿವೆಕಾಳಿನಷ್ಟು ವಿಶ್ವಾಸ ನಿಮ್ಮಲ್ಲಿದ್ದು, ನೀವು ಈ ಅತ್ತಿಮರಕ್ಕೆ, ‘ನೀನು ಬೇರುಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೊ,’ ಎಂದು ಆಜ್ಞಾಪಿಸಿದ್ದೇ ಆದರೆ ಅದು ನಿಮಗೆ ವಿಧೇಯವಾಗಿ ನಡೆದುಕೊಳ್ಳುವುದು.</verse>
				<verse number="7">“ನಿಮಗೆ ಒಬ್ಬ ಆಳಿದ್ದಾನೆಂದು ಭಾವಿಸೋಣ. ಅವನು ಹೊಲ ಉತ್ತೋ, ಕುರಿ ಮೇಯಿಸಿಯೋ ಮನೆಗೆ ಬರುತ್ತಾನೆ. ಬಂದಾಕ್ಷಣವೇ, ‘ಬಾ, ನನ್ನೊಂದಿಗೆ ಊಟಮಾಡು,’ ಎಂದು ನಿಮ್ಮಲ್ಲಿ ಯಾರಾದರೂ ಅವನಿಗೆ ಹೇಳುತ್ತಾರೆಯೇ? ಇಲ್ಲ.</verse>
				<verse number="8">ಅದಕ್ಕೆ ಬದಲಾಗಿ ‘ಊಟ ಸಿದ್ಧಮಾಡು; ನಾನು ಊಟಮಾಡಿ ಮುಗಿಸುವ ತನಕ ನಡುಕಟ್ಟಿಕೊಂಡು ನನಗೆ ಉಪಚಾರಮಾಡು. ಅನಂತರ ನೀನು ಊಟಮಾಡುವೆಯಂತೆ,’ ಎಂದು ಹೇಳುತ್ತಾರಲ್ಲವೇ?</verse>
				<verse number="9">ತಮ್ಮ ಆಜ್ಞೆಯ ಪ್ರಕಾರ ನಡೆದುಕೊಂಡ ಆಳಿಗೆ ಅವರು ಕೃತಜ್ಞತೆ ಸಲ್ಲಿಸುತ್ತಾರೆಯೇ? ಇಲ್ಲ.</verse>
				<verse number="10">ಹಾಗೆಯೇ ನೀವು ಸಹ. ನಿಮಗೆ ವಿಧಿಸಿದ್ದನ್ನು ಮಾಡಿ ಮುಗಿಸಿದ ನಂತರ, ‘ನಾವು ಕೇವಲ ಆಳುಗಳು; ನಮ್ಮ ಕರ್ತವ್ಯವನ್ನು ನಾವು ಮಾಡಿದ್ದೇವೆ,’ ಎಂದುಕೊಳ್ಳಿರಿ,” ಎಂದರು.</verse>
				<verse number="11">ಯೇಸುಸ್ವಾಮಿ ಜೆರುಸಲೇಮಿಗೆ ಪ್ರಯಾಣ ಮಾಡುತ್ತಾ ಸಮಾರಿಯ ಹಾಗೂ ಗಲಿಲೇಯ ಗಡಿಗಳ ನಡುವೆ ಹಾದುಹೋಗುತ್ತಿದ್ದರು.</verse>
				<verse number="12">ಒಂದು ಗ್ರಾಮವನ್ನು ಸಮೀಪಿಸಿದಾಗ ಕುಷ್ಠರೋಗದಿಂದ ನರಳುತ್ತಿದ್ದ ಹತ್ತುಮಂದಿ ಅವರಿಗೆ ಎದುರಾಗಿ ಬಂದರು. ದೂರದಲ್ಲೇ ನಿಂತು,</verse>
				<verse number="13">‘ಯೇಸುವೇ, ಗುರುವೇ, ನಮ್ಮ ಮೇಲೆ ಕರುಣೆಯಿಡಿ,’ ಎಂದು ಕೂಗಿ ಕೇಳಿಕೊಂಡರು.</verse>
				<verse number="14">ಯೇಸು ಅವರನ್ನು ನೋಡಿ, “ನೀವು ಯಾಜಕರ ಬಳಿಗೆ ಹೋಗಿರಿ. ಅವರು ನಿಮ್ಮನ್ನು ಪರೀಕ್ಷಿಸಲಿ,” ಎಂದರು. ಅಂತೆಯೇ, ಅವರು ದಾರಿಯಲ್ಲಿ ಹೋಗುತ್ತಿರುವಾಗಲೇ ಗುಣಹೊಂದಿದರು.</verse>
				<verse number="15">ಅವರಲ್ಲಿ ಒಬ್ಬನು ತಾನು ಗುಣಹೊಂದಿದ್ದನ್ನು ಕಂಡು, ಹರ್ಷೋದ್ಗಾರದಿಂದ ದೇವರನ್ನು ಸ್ತುತಿಸುತ್ತಾ ಹಿಂದಿರುಗಿ ಬಂದನು.</verse>
				<verse number="16">ಯೇಸುವಿನ ಪಾದಕ್ಕೆ ಸಾಷ್ಟಾಂಗವೆರಗಿ ಕೃತಜ್ಞತೆಯನ್ನು ಸಲ್ಲಿಸಿದನು. ಇವನೋ ಸಮಾರಿಯದವನು!</verse>
				<verse number="17">ಆಗ ಯೇಸು, “ಹತ್ತುಮಂದಿ ಗುಣಹೊಂದಿದರಲ್ಲವೆ? ಮಿಕ್ಕ ಒಂಬತ್ತು ಮಂದಿ ಎಲ್ಲಿ?</verse>
				<verse number="18">ದೇವರನ್ನು ಸ್ತುತಿಸುವುದಕ್ಕೆ ಈ ಹೊರನಾಡಿನವನು ಹೊರತು ಬೇರಾರೂ ಬರಲಿಲ್ಲವೇ?” ಎಂದರು.</verse>
				<verse number="19">ಅನಂತರ ಆ ಸಮಾರಿಯದವನಿಗೆ, “ಎದ್ದುಹೋಗು; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಪಡಿಸಿದೆ,” ಎಂದು ಹೇಳಿದರು.</verse>
				<verse number="20">ದೇವರ ಸಾಮ್ರಾಜ್ಯವು ಯಾವಾಗ ಬರುವುದೆಂದು ಫರಿಸಾಯರು ಕೇಳಿದಾಗ ಯೇಸುಸ್ವಾಮಿ ಪ್ರತ್ಯುತ್ತರವಾಗಿ, “ದೇವರ ಸಾಮ್ರಾಜ್ಯವು ಕಣ್ಣುಗಳಿಗೆ ಕಾಣಿಸುವಂತೆ ಬರುವುದಿಲ್ಲ.</verse>
				<verse number="21">‘ಇಗೋ, ಅದು ಇಲ್ಲಿದೆ ಅಥವಾ ಅಲ್ಲಿದೆ,’ ಎಂದು ಹೇಳುವಂತಿಲ್ಲ. ಏಕೆಂದರೆ, ದೇವರ ಸಾಮ್ರಾಜ್ಯವು ನಿಮ್ಮೊಳಗೇ ಇದೆ,” ಎಂದರು.</verse>
				<verse number="22">ಅನಂತರ ಶಿಷ್ಯರನ್ನು ಉದ್ದೇಶಿಸಿ, “ಕಾಲ ಒಂದು ಬರುವುದು, ಆಗ ನರಪುತ್ರನೊಂದಿಗೆ ಒಂದು ದಿನವನ್ನಾದರೂ ಕಳೆಯಲು ಹಂಬಲಿಸುವಿರಿ. ಆದರೆ ನಿಮಗದು ಲಭಿಸದು.</verse>
				<verse number="23">‘ಇಗೋ, ಇಲ್ಲಿದ್ದಾನೆ; ಅಗೋ ಅಲ್ಲಿದ್ದಾನೆ,’ ಎಂದು ಜನರು ಸುದ್ದಿ ಎಬ್ಬಿಸುವರು. ಅದನ್ನು ನೀವು ನೋಡಲು ಹೋಗಬೇಡಿ; ಅಂಥವರನ್ನು ಹಿಂಬಾಲಿಸಲೂ ಬೇಡಿ.</verse>
				<verse number="24">ಆಕಾಶದ ಒಂದು ದಿಕ್ಕಿನಿಂದ ಇನ್ನೊಂದು ದಿಕ್ಕಿನವರೆಗೆ ಮಿನುಗಿ ಹೊಳೆಯುವ ಮಿಂಚಿನಂತೆ ನರಪುತ್ರನು ತಾನು ಬರುವ ಕಾಲದಲ್ಲಿ ಕಾಣಿಸಿಕೊಳ್ಳುವನು.</verse>
				<verse number="25">ಆದರೆ ಅದಕ್ಕೆ ಮೊದಲು ಆತನು ತೀವ್ರ ಯಾತನೆಯನ್ನು ಅನುಭವಿಸಿ ಈ ಪೀಳಿಗೆಯಿಂದ ತಿರಸ್ಕೃತನಾಗಬೇಕು.</verse>
				<verse number="26">ನೋವನ ಕಾಲದಲ್ಲಿ ನಡೆದಂತೆಯೇ ನರಪುತ್ರನು ಬರುವ ಕಾಲದಲ್ಲೂ ನಡೆಯುವುದು.</verse>
				<verse number="27">ನೋವನು ನಾವೆಯನ್ನು ಹತ್ತುವ ದಿನದ ತನಕ ಜನರು ತಿನ್ನುತ್ತಾ ಕುಡಿಯುತ್ತಾ ಇದ್ದರು; ಮದುವೆ ಮಾಡಿಕೊಳ್ಳುತ್ತಾ, ಮಾಡಿಕೊಡುತ್ತಾ ಇದ್ದರು; ಜಲಪ್ರಳಯ ಬಂದು ಎಲ್ಲರನ್ನು ನಾಶಮಾಡಿತು.</verse>
				<verse number="28">ಅಂತೆಯೇ, ಲೋತನ ಕಾಲದಲ್ಲೂ ನಡೆಯಿತು. ಜನರು ಅನ್ನಪಾನೀಯಗಳಲ್ಲಿ ಆಸಕ್ತರಾಗಿದ್ದರು; ಲೇವಾದೇವಿಯಲ್ಲಿ ತೊಡಗಿದ್ದರು; ನೆಡುವುದರಲ್ಲೂ ನಿರ್ಮಿಸುವುದರಲ್ಲೂ ನಿರತರಾಗಿದ್ದರು.</verse>
				<verse number="29">ಲೋತನು ಸೊದೋಮ್ ಊರನ್ನು ಬಿಟ್ಟು ತೆರಳಿದ ದಿನದಂದೇ ಆಕಾಶದಿಂದ ಅಗ್ನಿ ಮತ್ತು ಗಂಧಕದ ಮಳೆ ಸುರಿದು ಎಲ್ಲರನ್ನು ನಾಶಮಾಡಿತು.</verse>
				<verse number="30">ನರಪುತ್ರನು ಪ್ರತ್ಯಕ್ಷನಾಗುವ ದಿನದಲ್ಲೂ ಹಾಗೆಯೇ ನಡೆಯುವುದು.</verse>
				<verse number="31">“ಆ ದಿನದಲ್ಲಿ ಮಾಳಿಗೆಯ ಮೇಲಿರುವವನು ಮನೆಯಲ್ಲಿರುವ ಸರಕುಸಾಮಗ್ರಿಗಳನ್ನು ತೆಗೆದುಕೊಳ್ಳಲು ಕೆಳಗಿಳಿಯದಿರಲಿ. ಅಂತೆಯೇ, ಹೊಲದಲ್ಲಿರುವವನು ಮನೆಗೆ ಹಿಂದಿರುಗದಿರಲಿ.</verse>
				<verse number="32">ಲೋತನ ಪತ್ನಿಗಾದ ಗತಿಯನ್ನು ನೆನಪಿಗೆ ತಂದುಕೊಳ್ಳಿರಿ!</verse>
				<verse number="33">“ಯಾರು ತನ್ನ ಪ್ರಾಣವನ್ನು ಉಳಿಸಿಕೊಳ್ಳಲು ಇಚ್ಛಿಸುತ್ತಾನೋ ಅವನು ಅದನ್ನು ಕಳೆದುಕೊಳ್ಳುತ್ತಾನೆ; ಯಾರು ತನ್ನ ಪ್ರಾಣವನ್ನು ಕಳೆದುಕೊಳ್ಳುತ್ತಾನೋ ಅವನು ಅದನ್ನು ರಕ್ಷಿಸಿಕೊಳ್ಳುತ್ತಾನೆ.</verse>
				<verse number="34">ಆ ರಾತ್ರಿ ಒಂದೇ ಹಾಸಿಗೆಯಲ್ಲಿ ಇಬ್ಬರು ಮಲಗಿದ್ದರೆ, ಆ ಇಬ್ಬರಲ್ಲಿ ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು; ಒಬ್ಬನನ್ನು ಬಿಡಲಾಗುವುದು.</verse>
				<verse number="35">ಒಂದೇ ಕಲ್ಲಲ್ಲಿ ಬೀಸುತ್ತಿರುವ ಇಬ್ಬರು ಮಹಿಳೆಯರಲ್ಲಿ, ಒಬ್ಬಳನ್ನು ತೆಗೆದುಕೊಂಡು ಹೋಗಲಾಗುವುದು, ಇನ್ನೊಬ್ಬಳನ್ನು ಬಿಡಲಾಗುವುದು. (</verse>
				<verse number="36">ಹೊಲದಲ್ಲಿದ್ದ ಇಬ್ಬರಲ್ಲಿ ಒಬ್ಬನನ್ನು ತೆಗೆದುಕೊಂಡು ಹೋಗಲಾಗುವುದು ಮತ್ತೊಬ್ಬನನ್ನು ಬಿಡಲಾಗುವುದು)” ಎಂದರು.</verse>
				<verse number="37">“ಸ್ವಾಮೀ, ಇದು ಎಲ್ಲಿ ನಡೆಯುವುದು?” ಎಂದು ಶಿಷ್ಯರು ಕೇಳಿದಾಗ, ಯೇಸು, “ಹೆಣವಿದ್ದಲ್ಲಿ ರಣಹದ್ದುಗಳು ಬಂದು ಕೂಡುವುವು,” ಎಂದರು.</verse>
			</chapter>
			<chapter number="18">
				<verse number="1">ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:</verse>
				<verse number="2">“ಒಂದು ನಗರದಲ್ಲಿ ಒಬ್ಬ ನ್ಯಾಯಾಧೀಶನಿದ್ದ. ಅವನು ದೇವರಿಗೂ ಭಯಪಡುತ್ತಿರಲಿಲ್ಲ; ಮಾನವರಿಗೂ ಲಕ್ಷ್ಯಕೊಡುತ್ತಿರಲಿಲ್ಲ.</verse>
				<verse number="3">ಅದೇ ಊರಿನಲ್ಲಿ ಒಬ್ಬ ವಿಧವೆಯಿದ್ದಳು. ಅವಳು ಪದೇಪದೇ ಅವನ ಬಳಿಗೆ ಬಂದು, ‘ನನ್ನ ವಿರೋಧಿ ಅನ್ಯಾಯಮಾಡಿದ್ದಾನೆ; ನನಗೆ ನ್ಯಾಯ ದೊರಕಿಸಿಕೊಡಿ,’ ಎಂದು ಕೇಳಿಕೊಳ್ಳುತ್ತಿದ್ದಳು.</verse>
				<verse number="4">ಬಹುಕಾಲ ನ್ಯಾಯಾಧೀಶನು ಅವಳಿಗೆ ಕಿವಿಗೊಡಲೇ ಇಲ್ಲ. ಕೊನೆಗೆ ಅವನು, ‘ನಾನು ದೇವರಿಗೆ ಹೆದರುವವನಲ್ಲ; ಮಾನವರಿಗೆ ಲಕ್ಷ್ಯಕೊಡುವವನೂ ಅಲ್ಲ;</verse>
				<verse number="5">ಇಷ್ಟಾದರೂ ಈ ವಿಧವೆಯ ಕಾಟವನ್ನು ತಪ್ಪಿಸಿಕೊಳ್ಳಲು, ಈಕೆಯ ನ್ಯಾಯ ತೀರಿಸಿಬಿಡುತ್ತೇನೆ. ಇಲ್ಲವಾದರೆ, ಈಕೆ ಪದೇಪದೇ ಬಂದು ನನ್ನ ತಲೆಕೆಡಿಸಿಬಿಟ್ಟಾಳು,’ ಎಂದುಕೊಂಡ.”</verse>
				<verse number="6">ಅನಂತರ ಪ್ರಭು ಯೇಸು, “ಈ ನೀತಿಕೆಟ್ಟ ನ್ಯಾಯಾದೀಶ ಹೇಳಿಕೊಂಡ ಮಾತುಗಳನ್ನು ಕೇಳಿದಿರಲ್ಲವೆ?</verse>
				<verse number="7">ಹೀಗಿರುವಲ್ಲಿ ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲುರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ? ತಡಮಾಡಿಯಾರೆ?</verse>
				<verse number="8">ಶೀಘ್ರವಾಗಿ ಅವರಿಗೆ ನ್ಯಾಯ ದೊರಕಿಸಿಕೊಡುವರೆಂದು ನಿಮಗೆ ಹೇಳುತ್ತೇನೆ. ಇಷ್ಟಾದರೂ ನರಪುತ್ರನು ಬರುವಾಗ ಜಗತ್ತಿನಲ್ಲಿ ವಿಶ್ವಾಸ ಇರುವುದನ್ನು ಕಾಣುವನೋ?’ ಎಂದರು.</verse>
				<verse number="9">ಕೆಲವರು ತಾವೇ ಸತ್ಪುರುಷರು ಎಂದುಕೊಂಡು ಇತರರನ್ನು ತುಚ್ಛವಾಗಿ ಕಾಣುತ್ತಿದ್ದರು. ಅಂಥವರನ್ನು ಉದ್ದೇಶಿಸಿ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು:</verse>
				<verse number="10">“ಒಮ್ಮೆ, ಇಬ್ಬರು ಪ್ರಾರ್ಥನೆಮಾಡಲು ದೇವಾಲಯಕ್ಕೆ ಹೋದರು. ಇವರಲ್ಲಿ ಒಬ್ಬನು ಫರಿಸಾಯನು, ಇನ್ನೊಬ್ಬನು ಸುಂಕವಸೂಲಿಯವನು.</verse>
				<verse number="11">ಫರಿಸಾಯನು ಮುಂದೆ ನಿಂತು ತನ್ನಷ್ಟಕ್ಕೆ ಹೀಗೆ ಪ್ರಾರ್ಥನೆಮಾಡಿದ: ‘ಓ ದೇವರೇ, ನಾನು ಇತರರ ಹಾಗೆ ಅಲ್ಲ. ಅವರೋ ಕೊಳ್ಳೆಗಾರರು, ಅನ್ಯಾಯಗಾರರು, ವ್ಯಭಿಚಾರಿಗಳು. ನಾನು ಈ ಸುಂಕದವನಂತೆಯೂ ಅಲ್ಲ. ಇದಕ್ಕಾಗಿ ನಿಮಗೆ ಧನ್ಯವಾದವನ್ನು ಸಲ್ಲಿಸುತ್ತೇನೆ.</verse>
				<verse number="12">ನಾನಾದರೋ ವಾರಕ್ಕೆ ಎರಡು ದಿನ ಉಪವಾಸವ್ರತವನ್ನು ಕೈಗೊಳ್ಳುತ್ತೇನೆ; ನನ್ನ ಆದಾಯದಲ್ಲಿ ಹತ್ತನೆಯ ಒಂದು ಪಾಲನ್ನು ನಿಮಗೆ ಸಲ್ಲಿಸುತ್ತೇನೆ.’</verse>
				<verse number="13">ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ.</verse>
				<verse number="14">“ದೇವರ ದೃಷ್ಟಿಯಲ್ಲಿ ಪಾಪಮುಕ್ತನಾಗಿ ಮನೆಗೆ ತೆರಳಿದವನು ಈ ಸುಂಕವಸೂಲಿಯವನು, ಆ ಫರಿಸಾಯನಲ್ಲ, ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ. ಏಕೆಂದರೆ, ತನ್ನನ್ನು ತಾನೇ ಮೇಲಕ್ಕೇರಿಸಿಕೊಳ್ಳುವವನನ್ನು ದೇವರು ಕೆಳಗಿಳಿಸುವರು. ತನ್ನನ್ನು ತಾನೇ ಕೆಳಗಿಳಿಸಿಕೊಳ್ಳುವವನನ್ನು ದೇವರು ಮೇಲಕ್ಕೇರಿಸುವರು,” ಎಂದರು ಯೇಸು.</verse>
				<verse number="15">ಕೆಲವರು ತಮ್ಮ ಹಸುಳೆಗಳನ್ನು ಯೇಸುಸ್ವಾಮಿ ಮುಟ್ಟಿ ಹರಸಬೇಕೆಂದು ಅಲ್ಲಿಗೆ ಕರೆತಂದರು. ಇದನ್ನು ಕಂಡ ಶಿಷ್ಯರು ಅವರನ್ನು ಗದರಿಸಿದರು.</verse>
				<verse number="16">ಆಗ ಯೇಸು ಆ ಹಸುಳೆಗಳನ್ನು ತಮ್ಮ ಬಳಿಗೆ ಕರೆತರಿಸಿ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ; ಅವುಗಳನ್ನು ತಡೆಯಬೇಡಿ; ದೇವರ ಸಾಮ್ರಾಜ್ಯ ಇಂಥವರದೇ!</verse>
				<verse number="17">ದೇವರ ಸಾಮ್ರಾಜ್ಯವನ್ನು ಶಿಶುಭಾವದಿಂದ ಅಂಗೀಕರಿಸದೆ ಇರುವವನು ಅದನ್ನು ಎಂದಿಗೂ ಸೇರಲಾರನು, ಇದು ನಿಶ್ಚಯ,” ಎಂದರು.</verse>
				<verse number="18">ಅಧಿಕಾರಿಯೊಬ್ಬನು ಯೇಸುಸ್ವಾಮಿಯ ಬಳಿಗೆ ಬಂದು, “ಒಳ್ಳೆಯ ಗುರುವೇ, ಅಮರಜೀವ ನನಗೆ ಪ್ರಾಪ್ತಿಯಾಗಬೇಕಾದರೆ ನಾನೇನು ಮಾಡಬೇಕು?” ಎಂದು ಕೇಳಿದನು.</verse>
				<verse number="19">“ನೀನು ನನ್ನನ್ನು ಒಳ್ಳೆಯವನೆಂದು ಕರೆದುದೇಕೆ? ದೇವರೊಬ್ಬರನ್ನು ಬಿಟ್ಟರೆ ಬೇರೆ ಯಾರೂ ಒಳ್ಳೆಯವರಲ್ಲ;</verse>
				<verse number="20">ದೈವಾಜ್ಞೆಗಳು ನಿನಗೆ ತಿಳಿದೇ ಇವೆ; ‘ವ್ಯಭಿಚಾರ ಮಾಡಬೇಡ, ನರಹತ್ಯೆ ಮಾಡಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆತಾಯಿಗಳನ್ನು ಗೌರವಿಸು’,” ಎಂದು ಯೇಸು ಅವನಿಗೆ ಉತ್ತರವಿತ್ತರು.</verse>
				<verse number="21">ಅದಕ್ಕೆ ಅವನು, “ನಾನು ಬಾಲ್ಯದಿಂದಲೇ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ,” ಎಂದನು.</verse>
				<verse number="22">ಇದನ್ನು ಕೇಳಿದ ಯೇಸು, “ನೀನು ಮಾಡಬೇಕಾದ ಕಾರ್ಯ ಇನ್ನೂ ಒಂದು ಉಳಿದಿದೆ; ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.</verse>
				<verse number="23">ಈ ಮಾತುಗಳನ್ನು ಕೇಳಿದ್ದೇ ಅವನಿಗೆ ತುಂಬ ವ್ಯಥೆಯಾಯಿತು. ಏಕೆಂದರೆ, ಅವನು ಬಹಳ ಸಿರಿವಂತನಾಗಿದ್ದನು.</verse>
				<verse number="24">ಅವನು ವ್ಯಥೆಗೀಡಾದುದನ್ನು ಕಂಡ ಯೇಸು, “ಸಿರಿವಂತರಿಗೆ ದೇವರ ಸಾಮ್ರಾಜ್ಯವನ್ನು ಸೇರುವುದು ಎಷ್ಟೊಂದು ಕಷ್ಟ!</verse>
				<verse number="25">ಐಶ್ವರ್ಯವಂತನು ದೇವರ ಸಾಮ್ರಾಜ್ಯವನ್ನು ಪ್ರವೇಶಿಸುವುದಕ್ಕಿಂತ ಒಂಟೆ ಸೂಜಿಗಣ್ಣಿನಲ್ಲಿ ನುಸುಳುವುದು ಸುಲಭ!” ಎಂದರು.</verse>
				<verse number="26">ಇದನ್ನು ಕೇಳಿದವರು, “ಹಾಗಾದರೆ ಯಾರು ತಾನೇ ಜೀವೋದ್ಧಾರ ಹೊಂದಲು ಸಾಧ್ಯ?” ಎನ್ನಲು</verse>
				<verse number="27">ಯೇಸು, “ಮಾನವರಿಗೆ ಅಸಾಧ್ಯವಾದುದು ದೇವರಿಗೆ ಸಾಧ್ಯ,” ಎಂದು ಹೇಳಿದರು.</verse>
				<verse number="28">ಆಗ ಪೇತ್ರನು, “ನೋಡಿ, ನಾವು ನಮ್ಮ ಮನೆಮಾರುಗಳನ್ನು ಬಿಟ್ಟುಬಿಟ್ಟು ನಿಮ್ಮನ್ನು ಹಿಂಬಾಲಿಸಿದ್ದೇವಲ್ಲಾ,” ಎಂದನು.</verse>
				<verse number="29">ಅದಕ್ಕೆ ಯೇಸು, “ನಿಮಗೆ ಖಂಡಿತವಾಗಿ ಹೇಳುತ್ತೇನೆ: ಯಾವನು ದೇವರ ಸಾಮ್ರಾಜ್ಯದ ನಿಮಿತ್ತ ಮನೆಯನ್ನಾಗಲಿ, ಮಡದಿಯನ್ನಾಗಲಿ, ಅಣ್ಣತಮ್ಮಂದಿರನ್ನಾಗಲಿ, ತಂದೆತಾಯಿಯರನ್ನಾಗಲಿ, ಮಕ್ಕಳು ಮರಿಯನ್ನಾಗಲಿ ತ್ಯಜಿಸುತ್ತಾನೋ</verse>
				<verse number="30">ಅವನು ಈ ಕಾಲದಲ್ಲಿ ಅದಕ್ಕಿಂತಲೂ ಮಿಗಿಲಾದುದನ್ನೂ ಮುಂದಿನ ಲೋಕದಲ್ಲಿ ಅಮರಜೀವವನ್ನೂ ಪಡೆಯುವನು,” ಎಂದರು.</verse>
				<verse number="31">ಯೇಸುಸ್ವಾಮಿ ಹನ್ನೆರಡುಮಂದಿ ಶಿಷ್ಯರನ್ನು ಪ್ರತ್ಯೇಕವಾಗಿ ಕರೆದು, “ನೋಡಿ, ನಾವು ಜೆರುಸಲೇಮಿಗೆ ಹೋಗುತ್ತಿದ್ದೇವೆ. ನರಪುತ್ರನ ವಿಷಯವಾಗಿ ಪ್ರವಾದಿಗಳು ಬರೆದಿರುವುದೆಲ್ಲವೂ ನೆರವೇರುವುದು.</verse>
				<verse number="32">ಆತನನ್ನು ಪರಕೀಯರ ಕೈಗೊಪ್ಪಿಸಲಾಗುವುದು; ಅವರು, ಅವನನ್ನು ಪರಿಹಾಸ್ಯ ಮಾಡುವರು, ಅಪಮಾನಪಡಿಸುವರು, ಉಗಿಯುವರು.</verse>
				<verse number="33">ಕೊರಡೆಗಳಿಂದ ಹೊಡೆಯುವರು ಮತ್ತು ಕೊಂದುಹಾಕುವರು. ಆತನಾದರೋ ಮೂರನೆಯ ದಿನ ಪುನರುತ್ಥಾನ ಹೊಂದುವನು,” ಎಂದರು.</verse>
				<verse number="34">ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಿಕೊಳ್ಳಲಿಲ್ಲ. ಈ ಹೇಳಿಕೆ ಅವರಿಗೆ ಒಗಟಾಗಿತ್ತು. ಎಂದೇ ಯೇಸುವಿನ ಮಾತುಗಳು ಅವರಿಗೆ ಅರ್ಥವಾಗಲಿಲ್ಲ.</verse>
				<verse number="35">ಯೇಸುಸ್ವಾಮಿ ಜೆರಿಕೊ ಪಟ್ಟಣವನ್ನು ಸಮೀಪಿಸುತ್ತಿದ್ದಾಗ ಕುರುಡನೊಬ್ಬನು ದಾರಿಯ ಪಕ್ಕದಲ್ಲಿ ಕುಳಿತು ಭಿಕ್ಷೆ ಬೇಡುತ್ತಿದ್ದನು.</verse>
				<verse number="36">ಜನಸಂದಣಿಯ ಶಬ್ದವನ್ನು ಆಲಿಸಿ, ಅದೇನೆಂದು ವಿಚಾರಿಸಿದನು.</verse>
				<verse number="37">“ನಜರೇತಿನ ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾರೆ,” ಎಂದು ಅವನಿಗೆ ತಿಳಿಸಲಾಯಿತು.</verse>
				<verse number="38">ಕೂಡಲೇ ಅವನು, “ಯೇಸುವೇ, ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಗಟ್ಟಿಯಾಗಿ ಕೂಗಿಕೊಂಡನು.</verse>
				<verse number="39">ಮುಂದೆ ಹೋಗುತ್ತಿದ್ದವರು, “ಸುಮ್ಮನಿರು” ಎಂದು ಅವನನ್ನು ಗದರಿಸಿದರು. ಅವನಾದರೋ, “ದಾವೀದ ಕುಲಪುತ್ರರೇ, ನನಗೆ ದಯೆತೋರಿ,” ಎಂದು ಮತ್ತಷ್ಟು ಗಟ್ಟಿಯಾಗಿ ಕೂಗಿಕೊಂಡನು.</verse>
				<verse number="40">ಇದನ್ನು ಕೇಳಿ ಯೇಸು, ಅಲ್ಲೇ ನಿಂತು, ಅವನನ್ನು ತಮ್ಮ ಬಳಿಗೆ ಕರೆದುತರುವಂತೆ ಅಪ್ಪಣೆ ಮಾಡಿದರು.</verse>
				<verse number="41">ಅವನು ಹತ್ತಿರಕ್ಕೆ ಬಂದಾಗ, “ನನ್ನಿಂದ ನಿನಗೇನಾಗಬೇಕು?” ಎಂದು ಕೇಳಲು ಅವನು, “ಸ್ವಾಮೀ, ನನಗೆ ಕಣ್ಣು ಕಾಣುವಂತೆ ಮಾಡಿ,” ಎಂದು ಪ್ರಾರ್ಥಿಸಿದನು.</verse>
				<verse number="42">ಯೇಸು ಅವನಿಗೆ, “ದೃಷ್ಟಿಯನ್ನು ಪಡೆ; ನಿನ್ನ ವಿಶ್ವಾಸವೇ ನಿನ್ನನ್ನು ಸ್ವಸ್ಥಮಾಡಿದೆ,” ಎಂದರು.</verse>
				<verse number="43">ಆ ಕ್ಷಣವೇ ಅವನಿಗೆ ದೃಷ್ಟಿಬಂದಿತು. ದೇವರನ್ನು ಸ್ತುತಿಸುತ್ತಾ ಅವನೂ ಯೇಸುವನ್ನು ಹಿಂಬಾಲಿಸಿದನು. ಇದನ್ನು ನೋಡಿದ ಜನರೆಲ್ಲರೂ ದೇವರನ್ನು ಕೊಂಡಾಡಿದರು.</verse>
			</chapter>
			<chapter number="19">
				<verse number="1">ಯೇಸುಸ್ವಾಮಿ ಜೆರಿಕೊ ಪಟ್ಟಣವನ್ನು ಪ್ರವೇಶಿಸಿ ಅದರ ಬೀದಿಗಳಲ್ಲಿ ಹಾದುಹೋಗುತ್ತಿದ್ದರು.</verse>
				<verse number="2">ಅಲ್ಲಿ ಜಕ್ಕಾಯ ಎಂಬವನಿದ್ದನು. ಅವನು ಸುಂಕವಸೂಲಿಯವರ ಮುಖಂಡ ಹಾಗೂ ಧನಾಢ್ಯ.</verse>
				<verse number="3">ಯೇಸು ಯಾರೆಂದು ನೋಡಬೇಕೆಂಬ ಅಪೇಕ್ಷೆ ಅವನದು. ಆದರೆ ಅವನು ಗಿಡ್ಡ ವ್ಯಕ್ತಿ. ಜನಜಂಗುಳಿಯ ಮಧ್ಯೆ ಯೇಸುವನ್ನು ನೋಡಲು ಪ್ರಯತ್ನಿಸಿದರೂ ಅವನಿಂದಾಗಲಿಲ್ಲ.</verse>
				<verse number="4">ಆದಕಾರಣ ಮುಂದಕ್ಕೆ ಓಡಿಹೋಗಿ ಯೇಸು ಬರುತ್ತಿದ್ದ ಆ ಮಾರ್ಗದಲ್ಲಿ ಒಂದು ಆಲದ ಮರವನ್ನು ಕಂಡು ಅದನ್ನು ಹತ್ತಿದನು.</verse>
				<verse number="5">ಯೇಸು ಆ ಸ್ಥಳಕ್ಕೆ ಬಂದು, ತಲೆಯೆತ್ತಿ ನೋಡಿ, “ಜಕ್ಕಾಯಾ, ಒಡನೆ ಇಳಿದು ಬಾ; ಈ ದಿನ ನಿನ್ನ ಮನೆಯಲ್ಲಿ ನಾನು ತಂಗಬೇಕು,” ಎಂದರು.</verse>
				<verse number="6">ಜಕ್ಕಾಯನು ತಕ್ಷಣವೇ ಇಳಿದುಬಂದು ಯೇಸುವನ್ನು ಸಂತೋಷದಿಂದ ಸ್ವಾಗತಿಸಿದನು.</verse>
				<verse number="7">ಇದನ್ನು ನೋಡಿದವರೆಲ್ಲರು, “ಯೇಸು ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ?” ಎಂದು ಗೊಣಗುಟ್ಟಿದರು.</verse>
				<verse number="8">ಜಕ್ಕಾಯನು ನೆರೆದಿದ್ದ ಜನರ ಮುಂದೆ ಎದ್ದುನಿಂತು ಯೇಸುವಿಗೆ, “ಪ್ರಭುವೇ, ನನ್ನ ಆಸ್ತಿಪಾಸ್ತಿಯಲ್ಲಿ ಅರ್ಧಭಾಗವನ್ನು ಬಡಬಗ್ಗರಿಗೆ ಕೊಟ್ಟುಬಿಡುತ್ತೇನೆ. ಯಾರಿಗಾದರೂ ಮೋಸಮಾಡಿ ಅವರಿಂದೇನಾದರೂ ನಾನು ಕಸಿದುಕೊಂಡಿದ್ದರೆ ಅದಕ್ಕೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.</verse>
				<verse number="9">ಆಗ ಯೇಸು, “ಇಂದು, ಈ ಮನೆ ಉದ್ಧಾರವಾಯಿತು. ಇವನು ಕೂಡ ಅಬ್ರಹಾಮನ ವಂಶಕ್ಕೆ ಸೇರಿದವನಲ್ಲವೆ?</verse>
				<verse number="10">ನರಪುತ್ರನು ಬಂದಿರುವುದು ಪತಿತರನ್ನು ಅರಸಿ ಉದ್ಧರಿಸುವುದಕ್ಕೆ,” ಎಂದು ಹೇಳಿದರು.</verse>
				<verse number="11">ಯೇಸುಸ್ವಾಮಿ ಈಗ ಜೆರುಸಲೇಮಿಗೆ ಸಮೀಪದಲ್ಲೇ ಇದ್ದರು. ಅವರ ಮಾತುಗಳನ್ನು ಕೇಳುತ್ತಿದ್ದ ಜನರು ದೇವರ ಸಾಮ್ರಾಜ್ಯ ಇದೀಗಲೇ ಪ್ರತ್ಯಕ್ಷವಾಗುವುದೆಂದು ಭಾವಿಸಿದ್ದರು.</verse>
				<verse number="12">ಈ ಕಾರಣ ಯೇಸು ಅವರಿಗೆ ಒಂದು ಸಾಮತಿಯನ್ನು ಹೇಳಿದರು: “ಕುಲೀನನೊಬ್ಬ ರಾಜಪದವಿಯನ್ನು ಗಳಿಸಿಬರಲು ದೂರದ ರಾಜಧಾನಿಗೆ ಹೊರಟ.</verse>
				<verse number="13">ಹೊರಡುವಾಗ ತನ್ನ ಹತ್ತುಮಂದಿ ಸೇವಕರನ್ನು ಕರೆದು, ಒಬ್ಬೊಬ್ಬನಿಗೂ ಒಂದರಂತೆ ಹತ್ತು ಚಿನ್ನದ ನಾಣ್ಯಗಳನ್ನು ಕೊಟ್ಟು, “ನಾನು ಬರುವತನಕ ವ್ಯಾಪಾರ ಮಾಡಿಕೊಂಡಿರಿ,” ಎಂದು ಹೇಳಿ ಹೋದ.</verse>
				<verse number="14">ಅವನ ನಾಡಿಗರಾದರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮಗೆ ರಾಜನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ತಮ್ಮ ಪ್ರತಿನಿಧಿಗಳನ್ನು ಕಳುಹಿಸಿದರು.</verse>
				<verse number="15">“ಆದರೂ ಅವನು ರಾಜಪದವಿಯನ್ನು ಪಡೆದು ಹಿಂದಿರುಗಿ ಬಂದ. ತನ್ನಿಂದ ಹಣಪಡೆದ ಸೇವಕರು ವ್ಯಾಪಾರಮಾಡಿ ಎಷ್ಟೆಷ್ಟು ಲಾಭಗಳಿಸಿದ್ದಾರೆಂದು ತಿಳಿದುಕೊಳ್ಳುವುದಕ್ಕಾಗಿ ಅವರನ್ನು ಕೂಡಲೇ ತನ್ನ ಬಳಿಗೆ ಕರೆತರಲು ಆಜ್ಞಾಪಿಸಿದ.</verse>
				<verse number="16">ಮೊದಲನೆಯವನು ಮುಂದೆ ಬಂದು, ‘ಪ್ರಭುವೇ, ನಿಮ್ಮ ಒಂದು ನಾಣ್ಯದಿಂದ ನಾನು ಹತ್ತು ನಾಣ್ಯಗಳನ್ನು ಸಂಪಾದಿಸಿದ್ದೇನೆ,’ ಎಂದ.</verse>
				<verse number="17">ಅದಕ್ಕೆ ಅವನು, ‘ಭಲಾ, ನೀನು ಒಳ್ಳೆಯ ಸೇವಕ, ಸ್ವಲ್ಪದರಲ್ಲಿ ನೀನು ಪ್ರಾಮಾಣಿಕನಾಗಿದ್ದೆ. ಆದ್ದರಿಂದ ಹತ್ತು ಪಟ್ಟಣಗಳಿಗೆ ಅಧಿಕಾರಿಯಾಗಿರು,’ ಎಂದ.</verse>
				<verse number="18">ಎರಡನೆಯ ಸೇವಕನು ಬಂದು, ‘ಪ್ರಭುವೇ, ನೀವು ಕೊಟ್ಟ ಒಂದು ನಾಣ್ಯದಿಂದ ಐದು ನಾಣ್ಯಗಳನ್ನು ಸಂಪಾದಿಸಿದ್ದೇನೆ,’ ಎಂದ.</verse>
				<verse number="19">ಅದಕ್ಕೆ ರಾಜ, ‘ನೀನು ಐದು ಪಟ್ಟಣಗಳಿಗೆ ಅಧಿಪತಿಯಾಗಿರು,’ ಎಂದ.</verse>
				<verse number="20">“ಬಳಿಕ ಮತ್ತೊಬ್ಬ ಸೇವಕನು ಬಂದು, ‘ಇಗೋ, ಪ್ರಭುವೇ, ನಿಮ್ಮ ಚಿನ್ನದ ನಾಣ್ಯ; ನಿಮಗೆ ಭಯಪಟ್ಟು ಇದನ್ನು ಬಟ್ಟೆಯಲ್ಲಿ ಭದ್ರವಾಗಿ ಕಟ್ಟಿ ಇಟ್ಟಿದ್ದೆ.</verse>
				<verse number="21">ಏಕೆಂದರೆ, ನೀವು ಕಠಿಣ ಮನುಷ್ಯರು; ನೀವು ಕೂಡಿಡದ್ದನ್ನು ಕೊಂಡುಹೋಗುತ್ತೀರಿ, ಬಿತ್ತದಿದ್ದನ್ನು ಕೊಯಿಲು ಮಾಡುತ್ತೀರಿ,’ ಎಂದ.</verse>
				<verse number="22">ರಾಜ ಅವನನ್ನು ನೋಡಿ, ‘ಎಲಾ ದುಷ್ಟ ಸೇವಕನೇ, ನೀನು ಆಡಿದ ಮಾತಿನಿಂದಲೇ ನಿನಗೆ ತೀರ್ಪುಕೊಡುತ್ತೇನೆ. ನಾನು ಕೂಡಿಡದ್ದನ್ನು ಕೊಂಡುಹೋಗುವ, ಬಿತ್ತದಿದ್ದನ್ನು ಕೊಯಿಲುಮಾಡುವ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತು ಅಲ್ಲವೆ?</verse>
				<verse number="23">ಹಾಗಾದರೆ ನನ್ನ ಹಣವನ್ನೇಕೆ ಬಡ್ಡಿ ಅಂಗಡಿಯಲ್ಲಿ ಹಾಕಿಡಲಿಲ್ಲ? ನಾನು ಬಂದು ಬಡ್ಡಿಸಮೇತ ನನ್ನ ಅಸಲನ್ನು ತೆಗೆದುಕೊಳ್ಳುತ್ತಿದ್ದೆನಲ್ಲಾ,’ ಎಂದು ಹೇಳಿ</verse>
				<verse number="24">ಪರಿಚಾರಕರಿಗೆ, ‘ಇವನಿಂದ ಆ ಚಿನ್ನದ ನಾಣ್ಯವನ್ನು ಕಿತ್ತು ಹತ್ತು ನಾಣ್ಯಗಳುಳ್ಳವನಿಗೆ ಕೊಡಿ,’ ಎಂದ.</verse>
				<verse number="25">ಅದಕ್ಕವರು, ‘ಪ್ರಭುವೇ, ಅವನಲ್ಲಿ ಈಗಾಗಲೇ ಹತ್ತು ನಾಣ್ಯಗಳಿವೆಯಲ್ಲಾ?’ ಎಂದರು.</verse>
				<verse number="26">ಆಗ ರಾಜ, ‘ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ, ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ, ಇದು ನಿಶ್ಚಯ,’ ಎಂದ.</verse>
				<verse number="27">“ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”</verse>
				<verse number="28">ಇದನ್ನೆಲ್ಲಾ ಹೇಳಿ ಆದಮೇಲೆ ಯೇಸುಸ್ವಾಮಿ ಅವರೆಲ್ಲರಿಗಿಂತ ಮುಂದಾಗಿ ನಡೆದು ಜೆರುಸಲೇಮಿನತ್ತ ತೆರಳಿದರು.</verse>
				<verse number="29">ಓಲಿವ್ ತೋಪಿನ ಗುಡ್ಡದ ಬಳಿಯಿರುವ ಬೆತ್ಫಗೆ ಮತ್ತು ಬೆಥಾನಿಯ ಎಂಬ ಊರುಗಳನ್ನು ಸಮೀಪಿಸಿದಾಗ ತಮ್ಮ ಇಬ್ಬರು ಶಿಷ್ಯರನ್ನು ಕರೆದು,</verse>
				<verse number="30">“ಎದುರಿಗೆ ಇರುವ ಆ ಹಳ್ಳಿಗೆ ಹೋಗಿರಿ. ನೀವು ಅದನ್ನು ಪ್ರವೇಶಿಸುವಾಗ ಅಲ್ಲೇ ಕಟ್ಟಿಹಾಕಿರುವ ಹೇಸರಗತ್ತೆಯ ಮರಿಯೊಂದನ್ನು ಕಾಣುವಿರಿ. ಈವರೆಗೆ ಅದರ ಮೇಲೆ ಯಾರೂ ಸವಾರಿಮಾಡಿಲ್ಲ. ಅದನ್ನು ಬಿಚ್ಚಿ ಇಲ್ಲಿಗೆ ತನ್ನಿ.</verse>
				<verse number="31">ಯಾರಾದರೂ ನಿಮ್ಮನ್ನು, ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದರೆ, ‘ಪ್ರಭುವಿಗೆ ಇದು ಬೇಕಾಗಿದೆ’ ಎನ್ನಿರಿ,” ಎಂದು ಹೇಳಿ ಕಳುಹಿಸಿದರು.</verse>
				<verse number="32">ಆ ಶಿಷ್ಯರಿಬ್ಬರೂ ಹೊರಟು ಯೇಸು ತಮಗೆ ಹೇಳಿದ್ದಂತೆಯೇ ಎಲ್ಲವನ್ನೂ ಕಂಡರು.</verse>
				<verse number="33">ಆ ಮರಿ ಹೇಸರಗತ್ತೆಯನ್ನು ಬಿಚ್ಚುತ್ತಿದ್ದಾಗ ಅದರ ಯಜಮಾನ, ‘ಅದನ್ನೇಕೆ ಬಿಚ್ಚುತ್ತೀರಿ?’ ಎಂದು ಕೇಳಿದನು.</verse>
				<verse number="34">ಇದು ಪ್ರಭುವಿಗೆ ಬೇಕಾಗಿದೆ,’ ಎಂದು ಶಿಷ್ಯರು ಉತ್ತರಕೊಟ್ಟು, ಅದನ್ನು ಯೇಸುವಿನ ಬಳಿಗೆ ತಂದರು.</verse>
				<verse number="35">ಅನಂತರ ತಮ್ಮ ಮೇಲಂಗಿಗಳನ್ನು ಅದರ ಮೇಲೆ ಹಾಸಿ ಯೇಸುವನ್ನು ಕೂರಿಸಿದರು.</verse>
				<verse number="36">ಅವರು ಮುಂದಕ್ಕೆ ಸಾಗುತ್ತಿದ್ದಂತೆ ಜನರು ತಮ್ಮ ಹೊದಿಕೆಗಳನ್ನು ದಾರಿಯಲ್ಲಿ ಹಾಸಿದರು.</verse>
				<verse number="37">ಯೇಸು ಜೆರುಸಲೇಮನ್ನು ಸಮೀಪಿಸುತ್ತಾ ಓಲಿವ್ ಗುಡ್ಡದ ಇಳಿಜಾರನ್ನು ಮುಟ್ಟಿದಾಗ ಶಿಷ್ಯಸಮೂಹವೆಲ್ಲವೂ ತಾವು ಕಂಡ ಎಲ್ಲ ಮಹತ್ಕಾರ್ಯಗಳನ್ನು ಕುರಿತು ಹರ್ಷಾವೇಶರಾಗಿ ದೇವರ ಸ್ತುತಿಮಾಡುತ್ತಾ -</verse>
				<verse number="38">“ಸರ್ವೇಶ್ವರನ ನಾಮದಲಿ ಬರುವ ಅರಸನಿಗೆ ಜಯಜಯವಾಗಲಿ! ಶಾಂತಿ ಸ್ವರ್ಗದಲಿ, ಮಹಿಮೆ ಮಹೋನ್ನತದಲಿ!” ಎಂದು ಜಯಘೋಷ ಮಾಡುತ್ತಿದ್ದರು.</verse>
				<verse number="39">ಆಗ ಜನಸಮೂಹದಲ್ಲಿದ್ದ ಫರಿಸಾಯರಲ್ಲಿ ಕೆಲವರು, “ಬೋಧಕರೇ, ಸುಮ್ಮನಿರುವಂತೆ ನಿಮ್ಮ ಶಿಷ್ಯರನ್ನು ಗದರಿಸಿರಿ,” ಎಂದರು.</verse>
				<verse number="40">ಅದಕ್ಕೆ ಯೇಸು, “ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗತೊಡಗುವುವು ಎಂಬುದು ನಿಮಗೆ ತಿಳಿದಿರಲಿ,” ಎಂದರು.</verse>
				<verse number="41">ಯೇಸುಸ್ವಾಮಿ ಜೆರುಸಲೇಮ್ ಪಟ್ಟಣಕ್ಕೆ ಇನ್ನೂ ಹತ್ತಿರವಾಗಿ ಬಂದು ಅದನ್ನು ನೋಡಿ,</verse>
				<verse number="42">“ಇಂದಾದರೂ ನೀನು ಶಾಂತಿಮಾರ್ಗವನ್ನು ಅರಿತುಕೊಂಡಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು. ಆದರೆ ಅದು ಈಗ ನಿನ್ನ ಕಣ್ಣಿಗೆ ಮರೆಯಾಗಿದೆ.</verse>
				<verse number="43">ಕಾಲವು ಬರುವುದು. ಆಗ ಶತ್ರುಗಳು ನಿನ್ನ ಸುತ್ತಲೂ ಆಳ್ವೇಲಿಯೆಬ್ಬಿಸಿ, ಮುತ್ತಿಗೆ ಹಾಕಿ, ಎಲ್ಲೆಡೆಯೂ ನುಗ್ಗಿ,</verse>
				<verse number="44">ನಿನ್ನನ್ನೂ ನಿನ್ನೊಳಗಿನ ಜನರನ್ನೂ ಧ್ವಂಸಮಾಡುವರು; ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವರು. ಏಕೆಂದರೆ, ದೇವರು ನಿನ್ನನ್ನು ಅರಸಿ ಬಂದ ಕಾಲವನ್ನು ನೀನು ಅರಿತುಕೊಳ್ಳದೆಹೋದೆ,” ಎಂದು ಅದರ ಸಲುವಾಗಿ ಕಣ್ಣೀರಿಟ್ಟರು.</verse>
				<verse number="45">ಅನಂತರ ಯೇಸುಸ್ವಾಮಿ ಮಹಾದೇವಾಲಯವನ್ನು ಪ್ರವೇಶಿಸಿದರು. ಅಲ್ಲಿ ಮಾರಾಟ ಮಾಡುತ್ತಿದ್ದವರನ್ನು ಹೊರಗಟ್ಟುತ್ತಾ,</verse>
				<verse number="46">“ ‘ಪ್ರಾರ್ಥನಾಲಯವೀ ನನ್ನ ಆಲಯ!’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ; ನೀವಾದರೋ ಇದನ್ನು ಕಳ್ಳಕಾಕರ ಗುಹೆಯನ್ನಾಗಿ ಮಾರ್ಪಡಿಸಿದ್ದೀರಿ,” ಎಂದರು.</verse>
				<verse number="47">ಪ್ರತಿನಿತ್ಯ ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದರು. ಇತ್ತ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಪ್ರಜಾಪ್ರಮುಖರೂ ಅವರನ್ನು ಕೊಲೆಮಾಡಲು ಹವಣಿಸುತ್ತಿದ್ದರು.</verse>
				<verse number="48">ಆದರೆ ಅವರಿಂದ ಏನೂ ಮಾಡಲಾಗಲಿಲ್ಲ. ಏಕೆಂದರೆ, ಜನರೆಲ್ಲರೂ ಯೇಸುವಿನ ಬೋಧನೆಗೆ ಮಾರುಹೋಗಿದ್ದರು. ಅವರ ಬಾಯಿಂದ ಬಂದ ಒಂದೊಂದು ಮಾತನ್ನು ಕೇಳಲು ಆತುರರಾಗಿದ್ದರು.</verse>
			</chapter>
			<chapter number="20">
				<verse number="1">ಒಂದು ದಿನ ಯೇಸುಸ್ವಾಮಿ ಮಹಾದೇವಾಲಯದಲ್ಲಿ ಜನರಿಗೆ ಬೋಧನೆಮಾಡುತ್ತಾ ಶುಭಸಂದೇಶವನ್ನು ಪ್ರಕಟಿಸುತ್ತಾ ಇದ್ದರು. ಆಗ ಮುಖ್ಯಯಾಜಕರು, ಧರ್ಮಶಾಸ್ತ್ರಿಗಳು ಮತ್ತು ಸಭಾಪ್ರಮುಖರು ಅಲ್ಲಿಗೆ ಬಂದು,</verse>
				<verse number="2">“ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ನಿನಗೆ ಈ ಅಧಿಕಾರವನ್ನು ಕೊಟ್ಟವರು ಯಾರು? ನಮಗೆ ತಿಳಿಸು,” ಎಂದು ಕೇಳಿದರು.</verse>
				<verse number="3">ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನಾನೂ ನಿಮಗೆ ಒಂದು ಪ್ರಶ್ನೆ ಹಾಕುತ್ತೇನೆ;</verse>
				<verse number="4">ಸ್ನಾನದೀಕ್ಷೆ ಕೊಡುವ ಅಧಿಕಾರ ಯೊವಾನ್ನನಿಗೆ ಎಲ್ಲಿಂದ ಬಂದಿತು? ದೇವರಿಂದಲೋ, ಮನುಷ್ಯರಿಂದಲೋ? ನನಗೆ ತಿಳಿಸಿರಿ,” ಎಂದರು.</verse>
				<verse number="5">ಇದನ್ನು ಕೇಳಿದ ಅವರೆಲ್ಲರೂ ತಮ್ಮತಮ್ಮೊಳಗೆ ಸಮಾಲೋಚಿಸುತ್ತಾ ಸಂವಾದಿಸುತ್ತಾ, “ದೇವರಿಂದ ಬಂದಿತು, ಎಂದು ನಾವು ಹೇಳಿದರೆ, ‘ನೀವೇಕೆ ಆತನನ್ನು ನಂಬಲಿಲ್ಲ?’ ಎಂದು ಕೇಳುವನು;</verse>
				<verse number="6">ಮನುಷ್ಯರಿಂದ ಬಂದಿತೆಂದು ಹೇಳಿದೆ ವಾದರೆ ಯೊವಾನ್ನನು ಪ್ರವಾದಿಯೆಂದು ಜನರೆಲ್ಲರಿಗೆ ಮನದಟ್ಟಾಗಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರು,” ಎಂದುಕೊಂಡರು.</verse>
				<verse number="7">ಅನಂತರ ಬಂದು, “ಅದು ಎಲ್ಲಿಂದ ಬಂದಿತೋ ನಮಗೆ ತಿಳಿಯದು,” ಎಂದು ಉತ್ತರಕೊಟ್ಟರು.</verse>
				<verse number="8">ಅದಕ್ಕೆ ಯೇಸು, “ಹಾಗಾದರೆ ನಾನು ಕೂಡ ಯಾವ ಅಧಿಕಾರದಿಂದ ಇದೆಲ್ಲವನ್ನು ಮಾಡುತ್ತೇನೆಂದು ನಿಮಗೆ ಹೇಳುವುದಿಲ್ಲ,” ಎಂದರು.</verse>
				<verse number="9">ಬಳಿಕ ಯೇಸುಸ್ವಾಮಿ ಜನರಿಗೆ ಈ ಸಾಮತಿಯನ್ನು ಹೇಳತೊಡಗಿದರು: “ಒಬ್ಬಾತ ಒಂದು ದ್ರಾಕ್ಷಿತೋಟ ಮಾಡಿಸಿದ. ಕಾರಣಾಂತರ ಅದನ್ನು ಗೇಣಿದಾರರಿಗೆ ವಹಿಸಿ, ದೀರ್ಘಕಾಲ ಹೊರನಾಡಿಗೆ ಪ್ರವಾಸ ಹೋದ.</verse>
				<verse number="10">ಫಲಕಾಲ ಬಂದಾಗ ತನಗೆ ಬರಬೇಕಾದ ಪಾಲನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಕಳುಹಿಸಿದ. ಗೇಣಿದಾರರು ಅವನನ್ನು ಹೊಡೆದು ಬರಿಗೈಯಲ್ಲಿ ಹಿಂದಕ್ಕೆ ಅಟ್ಟಿದರು.</verse>
				<verse number="11">ತೋಟದ ಯಜಮಾನ ಇನ್ನೊಬ್ಬ ಸೇವಕನನ್ನು ಕಳುಹಿಸಿದ. ಅವನನ್ನೂ ಹೊಡೆದು, ಬಡಿದು ಅವಮಾನ ಮಾಡಿ ಬರಿಗೈಯಲ್ಲೇ ಕಳುಹಿಸಿಬಿಟ್ಟರು.</verse>
				<verse number="12">ಯಜಮಾನ ಮೂರನೆಯವನನ್ನು ಕಳುಹಿಸಿದ. ಇವನನ್ನೂ ಚೆನ್ನಾಗಿ ಥಳಿಸಿ, ಗಾಯಗೊಳಿಸಿ, ಹೊರಕ್ಕೆ ದಬ್ಬಿದರು.</verse>
				<verse number="13">ಕಡೆಗೆ ತೋಟದ ಯಜಮಾನನು, ‘ಏನುಮಾಡಲಿ? ನನ್ನ ಮುದ್ದುಮಗನನ್ನೇ ಕಳುಹಿಸುತ್ತೇನೆ; ಬಹುಶಃ ಅವನಿಗಾದರೂ ಮರ್ಯಾದೆಕೊಟ್ಟಾರು,’ ಎಂದುಕೊಂಡ.</verse>
				<verse number="14">ಆದರೆ ಗೇಣಿದಾರರು ಯಜಮಾನನ ಮಗನನ್ನು ಕಂಡದ್ದೇ ತಡ, ‘ತೋಟಕ್ಕೆ ಇವನೇ ಉತ್ತರಾಧಿಕಾರಿ. ಇವನನ್ನು ಮುಗಿಸಿಬಿಡೋಣ; ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಮಾಡಿಕೊಂಡರು.</verse>
				<verse number="15">ಅಂತೆಯೇ ಅವನನ್ನು ತೋಟದಿಂದ ಹೊರಕ್ಕೆ ದಬ್ಬಿಕೊಂಡು ಹೋಗಿ ಕೊಂದುಹಾಕಿದರು.</verse>
				<verse number="16">“ಹೀಗಿರುವಲ್ಲಿ, ತೋಟದ ಯಜಮಾನ ಇವರಿಗೆ ಏನು ಮಾಡುತ್ತಾನೆ?” ಎಂದು ಕೇಳಿದ ಯೇಸು, ತಾವೇ ಉತ್ತರಿಸುತ್ತಾ, “ಅವನು ಬಂದು ಗೇಣಿದಾರರನ್ನು ಸಂಹರಿಸಿ ತೋಟವನ್ನು ಬೇರೆ ಗೇಣಿದಾರರಿಗೆ ಒಪ್ಪಿಸುತ್ತಾನೆ,” ಎಂದು ಹೇಳಿದರು.</verse>
				<verse number="17">ಇದನ್ನು ಜನರು ಕೇಳಿದ್ದೇ, “ಅಯ್ಯೋ, ಹಾಗೆ ಎಂದಿಗೂ ಸಂಭವಿಸದಿರಲಿ!” ಎಂದರು. ಯೇಸು ಅವರನ್ನು ದಿಟ್ಟಿಸಿ ನೋಡಿ, “ಹಾಗಾದರೆ; ‘ಮನೆ ಕಟ್ಟುವವರು ಬೇಡವೆಂದು ಬಿಸಾಡಿದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು.’ ಎಂದು ಪವಿತ್ರಗ್ರಂಥದಲ್ಲಿ ಹೇಳಿರುವುದರ ಅರ್ಥ ಆದರೂ ಏನು?</verse>
				<verse number="18">ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನೂ ಛಿದ್ರಛಿದ್ರವಾಗುವನು. ಯಾವನ ಮೇಲೆ ಈ ಕಲ್ಲು ಬೀಳುವುದೋ ಅವನು ಜಜ್ಜಿಹೋಗುವನು,” ಎಂದರು.</verse>
				<verse number="19">ತಮ್ಮನ್ನೇ ಕುರಿತು ಈ ಸಾಮತಿಯನ್ನು ಹೇಳಿದ್ದಾರೆಂದು ಅರಿತುಕೊಂಡ ಧರ್ಮಶಾಸ್ತ್ರಿಗಳು ಮತ್ತು ಮುಖ್ಯಯಾಜಕರು ಅಲ್ಲೇ ಯೇಸುವನ್ನು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟರು.</verse>
				<verse number="20">ಆದುದರಿಂದ ಸೂಕ್ತ ಸಂದರ್ಭ ಹುಡುಕತೊಡಗಿದರು. ಯೇಸುವನ್ನು ರಾಜ್ಯಪಾಲನ ವಶಕ್ಕೂ ನ್ಯಾಯಾಧಿಕಾರಕ್ಕೂ ಒಪ್ಪಿಸುವ ಉದ್ದೇಶದಿಂದ ಗೂಢಚಾರರನ್ನು ಕಳುಹಿಸಿದರು. ಇವರು ನಿಷ್ಕಪಟಿಗಳಂತೆ ನಟಿಸುತ್ತಾ ಯೇಸುವಿನ ಮಾತಿನಲ್ಲಿ ತಪ್ಪು ಕಂಡುಹಿಡಿಯಲು ಪ್ರಯತ್ನಿಸಿದರು.</verse>
				<verse number="21">“ಬೋಧಕರೇ, ನೀವು ಹೇಳುವುದು ಹಾಗೂ ಬೋಧಿಸುವುದು ನ್ಯಾಯಬಧ್ಧವಾಗಿಯೇ ಇದೆ. ಮುಖದಾಕ್ಷಿಣ್ಯವಿಲ್ಲದೆ ಸತ್ಯಕ್ಕನುಸಾರವಾಗಿ ಧರ್ಮಮಾರ್ಗವನ್ನು ಬೋಧಿಸುತ್ತೀರಿ. ಇದನ್ನು ನಾವು ಚೆನ್ನಾಗಿ ಬಲ್ಲೆವು.</verse>
				<verse number="22">ಹೀಗಿರುವಲ್ಲಿ, ನಾವು ರೋಮ್‍ ಚಕ್ರಾಧಿಪತಿಗೆ ತೆರಿಗೆ ಕೊಡುವುದು ಧರ್ಮಸಮ್ಮತವೋ ಅಲ್ಲವೋ ತಿಳಿಸಿ,” ಎಂದು ಕೇಳಿದರು.</verse>
				<verse number="23">ಅವರ ಕುಯುಕ್ತಿಯನ್ನು ಅರಿತುಕೊಂಡ ಯೇಸು,</verse>
				<verse number="24">“ಒಂದು ನಾಣ್ಯವನ್ನು ತೋರಿಸಿರಿ. ಇದರಲ್ಲಿರುವುದು ಯಾರ ಮುದ್ರೆ? ಯಾರ ಲಿಪಿ?” ಎಂದು ಕೇಳಿದರು. ಅದಕ್ಕೆ ಅವರು, “ರೋಮ್‍ ಚಕ್ರವರ್ತಿಯವು,” ಎಂದರು.</verse>
				<verse number="25">ಆಗ ಯೇಸು, “ಹಾಗಾದರೆ ಚಕ್ರವರ್ತಿಗೆ ಸಲ್ಲತಕ್ಕದ್ದನ್ನು ಚಕ್ರವರ್ತಿಗೂ, ದೇವರಿಗೆ ಸಲ್ಲತಕ್ಕದ್ದನ್ನು ದೇವರಿಗೂ ಸಲ್ಲಿಸಿರಿ,” ಎಂದರು.</verse>
				<verse number="26">ಯೇಸು ಕೊಟ್ಟ ಈ ಉತ್ತರಕ್ಕೆ ಬೆರಗಾಗಿ ಆ ಗೂಢಚಾರರು ಬಾಯಿ ಮುಚ್ಚಿಕೊಂಡರು. ಜನರ ಮುಂದೆ, ಯೇಸುವಿನ ಮಾತುಗಳಲ್ಲಿ ತಪ್ಪು ಕಂಡುಹಿಡಿಯಲು ಅವರಿಂದ ಸಾಧ್ಯವಾಗಲಿಲ್ಲ.</verse>
				<verse number="27">ಅನಂತರ, ಸತ್ತಮೇಲೆ ಪುನರುತ್ಥಾನ ಇಲ್ಲ, ಎಂದು ವಾದಿಸುತ್ತಿದ್ದ ಸದ್ದುಕಾಯರಲ್ಲಿ ಕೆಲವರು ಯೇಸುಸ್ವಾಮಿಯ ಬಳಿಗೆ ಬಂದು ಈ ಪ್ರಶ್ನೆ ಹಾಕಿದರು:</verse>
				<verse number="28">“ಬೋಧಕರೇ, ‘ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,’ ಎಂದು ಮೋಶೆ ನಮಗಾಗಿ ಬರೆದಿಟ್ಟಿದ್ದಾನಲ್ಲವೆ?</verse>
				<verse number="29">ಒಮ್ಮೆ ಏಳುಮಂದಿ ಅಣ್ಣತಮ್ಮಂದಿರಿದ್ದರು. ಅವರಲ್ಲಿ ಮೊದಲನೆಯವನಿಗೆ ಮದುವೆಯಾಯಿತು; ಆದರೆ ಅವನು ಮಕ್ಕಳಿಲ್ಲದೆ ಮೃತನಾದ.</verse>
				<verse number="30">ಅವನ ಹೆಂಡತಿಯನ್ನು ಎರಡನೆಯವನು,</verse>
				<verse number="31">ಅನಂತರ ಮೂರನೆಯವನು, ತದನಂತರ ಮಿಕ್ಕವರು, ಹೀಗೆ ಏಳುಮಂದಿಯೂ ಒಬ್ಬರಾದ ಮೇಲೆ ಒಬ್ಬರು ಮದುವೆಯಾಗಿ ಸಂತಾನ ಇಲ್ಲದೆಯೇ ನಿಧನರಾದರು.</verse>
				<verse number="32">ಕಟ್ಟಕಡೆಗೆ ಆ ಮಹಿಳೆಯೂ ಮರಣಹೊಂದಿದಳು.</verse>
				<verse number="33">ಹೀಗಿರುವಲ್ಲಿ ಪುನರುತ್ಥಾನದ ದಿನ ಸತ್ತವರೆಲ್ಲರೂಜೀವದಿಂದ ಎದ್ದುಬರುವಾಗ, ಆಕೆ ಯಾರ ಪತ್ನಿಯಾಗುವಳು? ಏಳುಮಂದಿ ಸಹೋದರರೂ ಆಕೆಯನ್ನು ವಿವಾಹ ಆಗಿದ್ದರಲ್ಲವೆ?” ಎಂದರು.</verse>
				<verse number="34">ಅದಕ್ಕೆ ಯೇಸು, “ಈ ಲೋಕದ ಜೀವನದಲ್ಲಿ ಜನರು ಮದುವೆ ಮಾಡಿಕೊಳ್ಳುತ್ತಾರೆ, ಮದುವೆ ಮಾಡಿಕೊಡುತ್ತಾರೆ.</verse>
				<verse number="35">ಆದರೆ ಸತ್ತವರು ಪುನರುತ್ಥಾನ ಹೊಂದಿ ಮರುಲೋಕ ಜೀವನಕ್ಕೆ ಯೋಗ್ಯರಾದಾಗ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ.</verse>
				<verse number="36">ಅವರು ಅಲ್ಲಿ ದೇವದೂತರಿಗೆ ಸಮಾನರಾಗಿರುವರು; ಅವರು ಎಂದಿಗೂ ಸಾಯುವಂತಿಲ್ಲ; ಪುನರುತ್ಥಾನದ ಫಲ ಆಗಿರುವ ಅವರು ದೇವರ ಮಕ್ಕಳಾಗಿರುವರು.</verse>
				<verse number="37">ಸತ್ತವರು ಪುನರುತ್ಥಾನ ಹೊಂದುವುದನ್ನು ಮೋಶೆಯ ಗ್ರಂಥದಲ್ಲಿ, ಅಂದರೆ ‘ಉರಿಯುವ ಪೊದೆ’ಯ ಪ್ರಸ್ತಾಪವಿರುವ ಭಾಗದಲ್ಲಿ ಸ್ಪಷ್ಟಪಡಿಸಲಾಗಿದೆ. ಅಲ್ಲಿ ಸರ್ವೇಶ್ವರನನ್ನು, ‘ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು ಆಗಿದ್ದಾರೆ’ ಎಂದು ಹೇಳಲಾಗಿದೆ.</verse>
				<verse number="38">ಹೀಗಿರುವಲ್ಲಿ ದೇವರು ಜೀವಂತರ ದೇವರೇ ಹೊರತು ಮೃತರ ದೇವರಲ್ಲ; ಅವರ ದೃಷ್ಟಿಯಲ್ಲಿ ಸರ್ವರೂ ಜೀವಂತರು,” ಎಂದರು.</verse>
				<verse number="39">ಇದನ್ನು ಕೇಳಿದ ಕೆಲವು ಧರ್ಮಶಾಸ್ತ್ರಿಗಳು, “ಬೋಧಕರೇ, ಚೆನ್ನಾಗಿ ಹೇಳಿದಿರಿ,” ಎಂದರು.</verse>
				<verse number="40">ಮುಂದೆ ಯಾವ ಪ್ರಶ್ನೆ ಕೇಳುವುದಕ್ಕೂ ಅವರಾರು ಧೈರ್ಯಗೊಳ್ಳಲಿಲ್ಲ.</verse>
				<verse number="41">ಬಳಿಕ ಯೇಸುಸ್ವಾಮಿ, “ಅಭಿಷಿಕ್ತ ಆದ ಲೋಕೋದ್ಧಾರಕನನ್ನು ‘ದಾವೀದನ ಪುತ್ರ’ ಎಂದು ಕರೆಯುತ್ತಾರಲ್ಲಾ, ಅದು ಹೇಗಾದೀತು? ಕೀರ್ತನಾ ಗ್ರಂಥದಲ್ಲಿ ಸ್ವತಃ ದಾವೀದನೇ ಹೀಗೆ ಹೇಳಿದ್ದಾನೆ:</verse>
				<verse number="42">“ನಿನ್ನ ಶತ್ರುಗಳನ್ನು ನಾನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು ಎಂದು ‘ನನ್ನ ಪ್ರಭುವಿಗೆ’ ಸರ್ವೇಶ್ವರ ಹೇಳಿದ್ದಾರೆ.”</verse>
				<verse number="43"></verse>
				<verse number="44">ಹೀಗೆ ದಾವೀದನೇ ಆತನನ್ನು, ‘ನನ್ನ ಪ್ರಭು,’ ಎಂದು ಕರೆದಿರುವಲ್ಲಿ ಆತನು ದಾವೀದನ ಪುತ್ರನು ಆಗಿರುವುದು ಹೇಗೆ?” ಎಂದು ಪ್ರಶ್ನಿಸಿದರು.</verse>
				<verse number="45">ಜನರೆಲ್ಲರು ಕಿವಿಗೊಟ್ಟು ಕೇಳುತ್ತಿದ್ದಂತೆ ಯೇಸುಸ್ವಾಮಿ ತಮ್ಮ ಶಿಷ್ಯರನ್ನು ನೋಡಿ, “ಧರ್ಮಶಾಸ್ತ್ರಿಗಳ ಬಗ್ಗೆ ಎಚ್ಚರಿಕೆಯಿಂದಿರಿ! ಅವರು ನಿಲುವಂಗಿಗಳನ್ನು ಧರಿಸಿಕೊಂಡು ತಿರುಗಾಡುತ್ತಾರೆ; ಪೇಟೆಬೀದಿಗಳಲ್ಲಿ ತಮಗೆ ವಂದನೋಪಚಾರ ಸಲ್ಲಬೇಕೆಂದು ಆಶಿಸುತ್ತಾರೆ; ಪ್ರಾರ್ಥನಾಮಂದಿರಗಳಲ್ಲಿ ಉನ್ನತ ಆಸನಗಳನ್ನೂ ಔತಣಕೂಟಗಳಲ್ಲಿ ಶ್ರೇಷ್ಠ ಸ್ಥಾನಮಾನಗಳನ್ನೂ ಅಪೇಕ್ಷಿಸುತ್ತಾರೆ.</verse>
				<verse number="46"></verse>
				<verse number="47">ವಿಧವೆಯರ ಮನೆಮಾರುಗಳನ್ನು ದೋಚಿಕೊಳ್ಳುವ ಈ ಜನ ನಟನೆಗಾಗಿ ಜಪತಪಗಳನ್ನು ದೀರ್ಘವಾಗಿ ಮಾಡುತ್ತಾರೆ. ಇವರನ್ನು ದೇವರು ಬಹಳ ಕಠಿಣವಾದ ದಂಡನೆಗೆ ಗುರಿಪಡಿಸುವರು,” ಎಂದರು.</verse>
			</chapter>
			<chapter number="21">
				<verse number="1">ದೇವಾಲಯದ ಕಾಣಿಕೆಯ ಪೆಟ್ಟಿಗೆಯಲ್ಲಿ ಧನವಂತರು ತಮ್ಮ ಕಾಣಿಕೆಯನ್ನು ಹಾಕುತ್ತಿದ್ದುದನ್ನು ಯೇಸುಸ್ವಾಮಿ ಗಮನಿಸಿದರು.</verse>
				<verse number="2">ಅಷ್ಟರಲ್ಲಿ ಒಬ್ಬ ಬಡವಿಧವೆ ಅಲ್ಲಿಗೆ ಬಂದು, ತಾಮ್ರದ ಚಿಕ್ಕ ನಾಣ್ಯಗಳೆರಡನ್ನು ಕಾಣಿಕೆಯಾಗಿ ಹಾಕಿದಳು.</verse>
				<verse number="3">ಅದನ್ನು ಕಂಡ ಯೇಸು, “ಈ ಬಡ ವಿಧವೆ ಅವರೆಲ್ಲರಿಗಿಂತಲೂ ಹೆಚ್ಚಾಗಿ ಅರ್ಪಿಸಿದಳೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.</verse>
				<verse number="4">ಅವರೆಲ್ಲರು ತಮ್ಮ ಅಪರಿಮಿತ ಐಶ್ವರ್ಯದಿಂದ ಕಾಣಿಕೆಯಿತ್ತರು; ಈಕೆಯಾದರೋ, ತನ್ನ ಕಡುಬಡತನದಲ್ಲೂ ತನಗಿದ್ದ ಜೀವನಾಧಾರವನ್ನೆಲ್ಲಾ ಕೊಟ್ಟುಬಿಟ್ಟಳು,” ಎಂದರು.</verse>
				<verse number="5">“ಈ ಮಹಾದೇವಾಲಯವು ಅಂದವಾದ ಕಲ್ಲುಗಳಿಂದಲೂ ಅಮೂಲ್ಯವಾದ ಕೊಡುಗೆಗಳಿಂದಲೂ ಎಷ್ಟು ಅಲಂಕೃತವಾಗಿದೆ!” ಎಂದು ಕೆಲವರು ಮಾತನಾಡುತ್ತಿದ್ದರು.</verse>
				<verse number="6">ಆಗ ಯೇಸು, “ಇವುಗಳನ್ನು ನೀವು ನೋಡುತ್ತಿದ್ದೀರಲ್ಲವೆ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯದು; ಎಲ್ಲವನ್ನೂ ಕೆಡವಿಹಾಕುವ ಕಾಲವೊಂದು ಬರುವುದು,” ಎಂದರು.</verse>
				<verse number="7">“ಗುರುವೇ, ಇದು ಸಂಭವಿಸುವುದು ಯಾವಾಗ? ಇದೀಗಲೆ ಸಂಭವಿಸಲಿದೆ ಎಂದು ತಿಳಿಸುವ ಪೂರ್ವಸೂಚನೆ ಯಾವುದು?” ಎಂದು ಕೆಲವರು ಕೇಳಿದರು.</verse>
				<verse number="8">ಅದಕ್ಕೆ ಯೇಸುಸ್ವಾಮಿ, “ನೀವು ಮೋಸಹೋಗದಂತೆ ಜಾಗರೂಕರಾಗಿರಿ. ‘ಅನೇಕರು ನಾನೇ ಆತ, ನಾನೇ ಆತ,’ ಎನ್ನುತ್ತಾ ನನ್ನ ಹೆಸರನ್ನೇ ಇಟ್ಟುಕೊಂಡು ಬಂದು, ‘ಕಾಲವು ಸಮೀಪಿಸಿಬಿಟ್ಟಿತು,’ ಎಂದು ಹೇಳುತ್ತಾರೆ. ಅವರನ್ನು ಹಿಂಬಾಲಿಸಬೇಡಿ.</verse>
				<verse number="9">ಸಮರ ಸಂಕಲಹಗಳ ಸುದ್ದಿ ಬಂದಾಗ ದಿಗಿಲುಗೊಳ್ಳಬೇಡಿ; ಇವೆಲ್ಲವೂ ಮೊದಲು ಸಂಭವಿಸಲೇಬೇಕು. ಆದರೂ ಅಂತ್ಯವು ಕೂಡಲೇ ಬರುವುದಿಲ್ಲ,” ಎಂದರು.</verse>
				<verse number="10">ಅದೂ ಅಲ್ಲದೆ ಯೇಸು ಇಂತೆಂದರು: “ಜನಾಂಗಕ್ಕೆ ವಿರುದ್ಧವಾಗಿ ಜನಾಂಗ, ರಾಷ್ಟ್ರಕ್ಕೆ ವಿರುದ್ಧವಾಗಿ ರಾಷ್ಟ್ರ ಯುದ್ಧಕ್ಕಿಳಿಯುವುವು;</verse>
				<verse number="11">ಭೀಕರ ಭೂಕಂಪಗಳಾಗುವುವು; ಕ್ಷಾಮಡಾಮರಗಳು ತಲೆದೋರುವುವು, ಭಯಂಕರ ಘಟನೆಗಳೂ ಬಾಹ್ಯಾಕಾಶದಲ್ಲಿ ಅಪೂರ್ವ ಸೂಚನೆಗಳೂ ಕಾಣಿಸಿಕೊಳ್ಳುವುವು.</verse>
				<verse number="12">ಇದೆಲ್ಲಾ ಸಂಭವಿಸುವುದಕ್ಕೆ ಮುಂಚೆ ನಿಮ್ಮನ್ನು ಬಂಧಿಸಿ ಹಿಂಸೆಗೊಳಪಡಿಸುವರು. ಪ್ರಾರ್ಥನಾಮಂದಿರಗಳಿಗೂ ಕಾರಾಗೃಹಗಳಿಗೂ ಎಳೆದೊಪ್ಪಿಸುವರು; ನನ್ನ ನಾಮದ ನಿಮಿತ್ತ ಅರಸರ ಹಾಗೂ ಅಧಿಪತಿಗಳ ಮುಂದಕ್ಕೆ ಎಳೆಯುವರು.</verse>
				<verse number="13">ಶುಭಸಂದೇಶಕ್ಕೆ ಸಾಕ್ಷಿಕೊಡಲು ಇದು ನಿಮಗೆ ಸದವಕಾಶವಾಗಿರುತ್ತದೆ.</verse>
				<verse number="14">ಆಗ ವಾದಿಸುವುದು ಹೇಗೆಂದು ನೀವು ಮುಂಚಿತವಾಗಿ ಚಿಂತಿಸಬೇಕಾಗಿಲ್ಲ; ಇದು ನಿಮಗೆ ಮನದಟ್ಟಾಗಿರಲಿ.</verse>
				<verse number="15">ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.</verse>
				<verse number="16">ನಿಮ್ಮ ತಂದೆತಾಯಿಗಳೇ, ಒಡಹುಟ್ಟಿದವರೇ, ಬಂಧುಮಿತ್ರರೇ, ನಿಮ್ಮನ್ನು ಪರಾಧೀನ ಮಾಡುವರು; ಮಾತ್ರವಲ್ಲ, ನಿಮ್ಮಲ್ಲಿ ಕೆಲವರನ್ನು ಕೊಂದುಹಾಕಿಸುವರು.</verse>
				<verse number="17">ನೀವು ನನ್ನವರು ಆದುದರಿಂದಲೇ ಎಲ್ಲರೂ ನಿಮ್ಮನ್ನು ದ್ವೇಷಿಸುವರು.</verse>
				<verse number="18">ಆದರೂ ನಿಮ್ಮ ತಲೆಕೂದಲೊಂದೂ ನಾಶವಾಗುವುದಿಲ್ಲ.</verse>
				<verse number="19">ಸೈರಣೆಯಿಂದಿರಿ, ಸಂರಕ್ಷಣೆಯನ್ನು ಪಡೆಯುವಿರಿ.</verse>
				<verse number="20">“ಜೆರುಸಲೇಮ್ ಪಟ್ಟಣವನ್ನು ಸೈನ್ಯಗಳು ಸುತ್ತುಗಟ್ಟುತ್ತಿರುವುದನ್ನು ನೀವು ಕಾಣುವಾಗ ಅದರ ವಿನಾಶ ಸಮೀಪಿಸಿತೆಂದು ತಿಳಿದುಕೊಳ್ಳಿ.</verse>
				<verse number="21">ಆಗ ಜುದೇಯದಲ್ಲಿರುವವರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ; ಪಟ್ಟಣದೊಳಗಿರುವವರು ಅಲ್ಲಿಂದ ಹೊರಟುಹೋಗಲಿ; ಹಳ್ಳಿಗಾಡಿನಲ್ಲಿರುವವರು ಪಟ್ಟಣಕ್ಕೆ ಬಾರದಿರಲಿ.</verse>
				<verse number="22">ಏಕೆಂದರೆ, ದಂಡನೆಯ ಕಾಲ ಅದು. ಅದನ್ನು ಕುರಿತು ಪವಿತ್ರಗ್ರಂಥದಲ್ಲಿ ಬರೆದಿರುವುದೆಲ್ಲಾ ಆಗ ನೆರವೇರಬೇಕು.</verse>
				<verse number="23">ಅಯ್ಯೋ, ಆ ದಿನಗಳಲ್ಲಿ ಗರ್ಭಿಣಿಯರ ಮತ್ತು ಹಾಲೂಡಿಸುವ ತಾಯಂದಿರ ಗೋಳೇನು! ಈ ನಾಡು ಮಹಾವಿಪತ್ತಿಗೆ ಈಡಾಗುವುದು. ಈ ಜನತೆ ದೈವಕೋಪಕ್ಕೆ ಗುರಿಯಾಗುವುದು.</verse>
				<verse number="24">ಕೆಲವರು ಕತ್ತಿಯ ಬಾಯಿಗೆ ತುತ್ತಾಗುವರು. ಮತ್ತೆ ಕೆಲವರು ಬಂಧಿತರಾಗಿ ದೇಶದೇಶಗಳಿಗೆ ಕೊಂಡೊಯ್ಯಲ್ಪಡುವರು; ಅನ್ಯದೇಶೀಯರು ತಮ್ಮ ಕಾಲಾವಧಿಯ ತನಕ ಜೆರುಸಲೇಮನ್ನು ತುಳಿದುಹಾಕುವರು.</verse>
				<verse number="25">“ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ವಿಚಿತ್ರ ಸೂಚನೆಗಳು ಕಾಣಿಸಿಕೊಳ್ಳುವುವು; ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿಹೋಗುವುವು.</verse>
				<verse number="26">ಗ್ರಹಶಕ್ತಿಗಳು ಕದಲುವುದರಿಂದ ಧರೆಯಲ್ಲಿ ಏನೇನು ಸಂಭವಿಸುವುದೋ ಎಂಬ ಭಯಭೀತಿಯಿಂದ ಮಾನವರು ದಿಗ್ಭ್ರಮೆಗೊಳ್ಳುವರು.</verse>
				<verse number="27">ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು.</verse>
				<verse number="28">ಇವೆಲ್ಲವೂ ಸಂಭವಿಸಲು ತೊಡಗುವಾಗ ನೀವು ನಿರೀಕ್ಷಿಸುತ್ತಾ ತಲೆಯೆತ್ತಿ ನಿಲ್ಲಿರಿ; ಏಕೆಂದರೆ, ನಿಮ್ಮ ಉದ್ಧಾರವು ಸಮೀಪಿಸಿತು.”</verse>
				<verse number="29">ಬಳಿಕ ಯೇಸುಸ್ವಾಮಿ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು: “ಅಂಜೂರದ ಹಾಗೂ ಇತರ ಮರಗಳನ್ನು ಗಮನಿಸಿರಿ.</verse>
				<verse number="30">ಅವುಗಳ ಎಲೆಗಳು ಚಿಗುರುತ್ತಲೇ ವಸಂತಕಾಲ ಆರಂಭಿಸಿತೆಂದು ನೀವೇ ಅರಿತುಕೊಳ್ಳುತ್ತೀರಿ.</verse>
				<verse number="31">ಅಂತೆಯೇ ಇವೆಲ್ಲವೂ ಸಂಭವಿಸುವುದನ್ನು ನೋಡುವಾಗ ದೇವರ ಸಾಮ್ರಾಜ್ಯವು ಸಮೀಪಿಸಿತೆಂದು ತಿಳಿದುಕೊಳ್ಳಿರಿ.</verse>
				<verse number="32">ಇವೆಲ್ಲ ಸಂಭವಿಸುವವರೆಗೆ ಈ ಪೀಳಿಗೆ ಗತಿಸಿಹೋಗದೆಂದು ಒತ್ತಿಹೇಳುತ್ತೇನೆ.</verse>
				<verse number="33">ಭೂಮ್ಯಾಕಾಶಗಳು ಗತಿಸಿಹೋಗುತ್ತವೆ; ಆದರೆ ನನ್ನ ಮಾತುಗಳು ಶಾಶ್ವತವಾಗಿ ಉಳಿಯುತ್ತವೆ.</verse>
				<verse number="34">“ಮಿತಿಮೀರಿದ ಭೋಜನದಿಂದಾಗಲಿ, ಕುಡಿತದಿಂದಾಗಲಿ, ಲೌಕಿಕ ಚಿಂತೆಗಳಿಂದಾಗಲಿ ಮಂದಮತಿಗಳಾಗಬೇಡಿ. ಆ ದಿನವು ಅನಿರೀಕ್ಷಿತ ಉರುಲಿನಂತೆ ನಿಮ್ಮನ್ನು ಸಿಕ್ಕಿಸೀತು, ಜಾಗರೂಕರಾಗಿರಿ!</verse>
				<verse number="35">ಜಗತ್ತಿನ ಎಲ್ಲಾ ನಿವಾಸಿಗಳೂ ಅದಕ್ಕೆ ಸಿದ್ಧರಾಗಿರಬೇಕು.</verse>
				<verse number="36">ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.</verse>
				<verse number="37">ಯೇಸುಸ್ವಾಮಿ ಹಗಲೆಲ್ಲಾ ಮಹಾದೇವಾಲಯದಲ್ಲಿ ಬೋಧಿಸುತ್ತಿದ್ದರು. ರಾತ್ರಿಯಲ್ಲಿ ಪಟ್ಟಣದಿಂದ ಹೊರಟು, ಓಲಿವ್ ತೋಪಿನ ಗುಡ್ಡದಲ್ಲಿ ತಂಗುತ್ತಿದ್ದರು.</verse>
				<verse number="38">ಅವರ ಬೋಧನೆಯನ್ನು ಕೇಳಲು ಜನರೆಲ್ಲರೂ ಸೂರ್ಯೋದಯಕ್ಕೆ ಮುಂಚೆಯೇ ಎದ್ದು ದೇವಾಲಯಕ್ಕೆ ಬರುತ್ತಿದ್ದರು.</verse>
			</chapter>
			<chapter number="22">
				<verse number="1">ಪಾಸ್ಕಮಹೋತ್ಸವವು ಸಮೀಪಿಸುತ್ತಿತ್ತು. ಅದು ಹುಳಿರಹಿತ ರೊಟ್ಟಿಯನ್ನು ಭುಜಿಸುವ ಹಬ್ಬ.</verse>
				<verse number="2">ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಕೊಲ್ಲಿಸಲು ಆಲೋಚನೆ ಮಾಡುತ್ತಿದ್ದರು; ಜನರ ಭಯ ಅವರಿಗೆ ಇದ್ದುದರಿಂದ ಅದಕ್ಕೆ ಗುಟ್ಟಾದ ಮಾರ್ಗವನ್ನು ಹುಡುಕುತ್ತಿದ್ದರು.</verse>
				<verse number="3">ಅಷ್ಟರಲ್ಲಿ ಯೇಸುವಿನ ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತಿನ ಯೂದನು ಸೈತಾನನಿಗೆ ವಶನಾದನು.</verse>
				<verse number="4">ಆ ಯೂದನು ಮುಖ್ಯಯಾಜಕರ ಬಳಿಗೆ ಹಾಗೂ ಮಹಾದೇವಾಲಯದ ಪಹರೆಯ ದಳಪತಿಗಳ ಬಳಿಗೆ ಹೋಗಿ, ಯೇಸುವನ್ನು ಅವರಿಗೆ ಹಿಡಿದುಕೊಡುವ ವಿಧಾನವನ್ನು ಕುರಿತು ಸಮಾಲೋಚಿಸಿದನು.</verse>
				<verse number="5">ಇದರಿಂದ ಅವರಿಗೆ ಅತ್ಯಾನಂದವಾಯಿತು. ಅವರು ಹಣಕೊಡುವುದಾಗಿ ವಾಗ್ದಾನ ಮಾಡಿದರು.</verse>
				<verse number="6">ಅವನೂ ಸಮ್ಮತಿಸಿ, ಜನಜಂಗುಳಿ ಇಲ್ಲದ ಸಂದರ್ಭದಲ್ಲಿ ಯೇಸುವನ್ನು ಹಿಡಿದು ಒಪ್ಪಿಸಲು ಸಮಯ ಕಾಯುತ್ತಾ ಇದ್ದನು.</verse>
				<verse number="7">ಹುಳಿರಹಿತ ರೊಟ್ಟಿಯ ಹಬ್ಬ ಆರಂಭವಾಯಿತು. ಪಾಸ್ಕ ಕುರಿಮರಿಯನ್ನು ಕೊಯ್ಯಬೇಕಾದ ದಿನವು ಬಂದಿತು.</verse>
				<verse number="8">ಆದುದರಿಂದ ಯೇಸುಸ್ವಾಮಿ ತಮ್ಮ ಶಿಷ್ಯರಾದ ಪೇತ್ರ ಹಾಗೂ ಯೊವಾನ್ನನನ್ನು ಕರೆದು, “ಹೋಗಿ, ಪಾಸ್ಕಭೋಜನ ಸಿದ್ಧಮಾಡಿರಿ,” ಎಂದರು.</verse>
				<verse number="9">“ಎಲ್ಲಿ ಸಿದ್ಧಪಡಿಸಬೇಕು?” ಎಂದು ಅವರು ಕೇಳಿದಾಗ,</verse>
				<verse number="10">“ನೀವು ಪಟ್ಟಣವನ್ನು ಪ್ರವೇಶಿಸುವಾಗ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬನನ್ನು ಎದುರುಗೊಳ್ಳುವಿರಿ. ಅವನನ್ನು ಹಿಂಬಾಲಿಸಿ, ಅವನು ಹೋಗುವ ಮನೆಗೆ ಹೋಗಿರಿ.</verse>
				<verse number="11">ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರ ಜೊತೆಯಲ್ಲಿ ಪಾಸ್ಕಭೋಜನ ಮಾಡಲು ಕೊಠಡಿ ಎಲ್ಲಿ, ಎಂದು ನಿಮ್ಮನ್ನು ವಿಚಾರಿಸಲು ನಮ್ಮ ಗುರು ಹೇಳಿದ್ದಾರೆ,’ ಎನ್ನಿ.</verse>
				<verse number="12">ಅವನು ಮೇಲ್ಮಾಳಿಗೆಯಲ್ಲಿ ವಿಶಾಲವಾದ ಹಾಗೂ ಸುಸಜ್ಜಿತವಾದ ಕೊಠಡಿಯೊಂದನ್ನು ತೋರಿಸುವನು. ಅಲ್ಲಿ ಸಿದ್ಧಮಾಡಿ,” ಎಂದರು.</verse>
				<verse number="13">ಅಂತೆಯೇ ಶಿಷ್ಯರಿಬ್ಬರು ಹೋಗಿ ಯೇಸು ತಮಗೆ ಹೇಳಿದ ಪ್ರಕಾರ ಎಲ್ಲವೂ ವ್ಯವಸ್ಥಿತವಾಗಿರುವುದನ್ನು ಕಂಡು ಪಾಸ್ಕಭೋಜನವನ್ನು ತಯಾರಿಸಿದರು.</verse>
				<verse number="14">ನಿಶ್ಚಿತ ಸಮಯ ಬಂದಾಗ ಯೇಸುಸ್ವಾಮಿ ಶಿಷ್ಯರ ಸಮೇತ ಊಟಕ್ಕೆ ಕುಳಿತರು.</verse>
				<verse number="15">ಆಗ ಅವರು ಶಿಷ್ಯರಿಗೆ, “ನಾನು ಯಾತನೆಯನ್ನು ಅನುಭವಿಸುವುದಕ್ಕೆ ಮುಂಚೆ ನಿಮ್ಮೊಡನೆ ಈ ಪಾಸ್ಕಭೋಜನವನ್ನು ಮಾಡಲು ಬಹಳ ಅಪೇಕ್ಷೆಯಿಂದ ಎದುರುನೋಡುತ್ತಿದ್ದೆನು.</verse>
				<verse number="16">ದೇವರ ಸಾಮ್ರಾಜ್ಯದಲ್ಲಿ ಇದು ಪೂರ್ಣ ಅರ್ಥವನ್ನು ಪಡೆಯುವ ತನಕ ನಾನಿದನ್ನು ಇನ್ನು ಭುಜಿಸುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.</verse>
				<verse number="17">ಅನಂತರ ಯೇಸು ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, “ಇದನ್ನು ತೆಗೆದುಕೊಂಡು ನಿಮ್ಮಲ್ಲಿ ಹಂಚಿಕೊಳ್ಳಿರಿ;</verse>
				<verse number="18">ದೇವರ ಸಾಮ್ರಾಜ್ಯವು ಬರುವ ತನಕ ಇನ್ನು ನಾನು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ ಎಂದು ನಿಮಗೆ ಹೇಳುತ್ತೇನೆ,” ಎಂದರು.</verse>
				<verse number="19">ಬಳಿಕ ರೊಟ್ಟಿಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಮುರಿದು, ಶಿಷ್ಯರಿಗೆ ಕೊಡುತ್ತಾ, “ಇದು ನಿಮಗಾಗಿ ಒಪ್ಪಿಸಲಾಗುವ ನನ್ನ ಶರೀರ, ನನ್ನ ಸ್ಮರಣೆಗಾಗಿ ಇದನ್ನು ಮಾಡಿರಿ,” ಎಂದರು.</verse>
				<verse number="20">ಅಂತೆಯೇ, ಊಟವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗಾಗಿ ಸುರಿಸಲಾಗುವ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ.”</verse>
				<verse number="21">“ಆದರೆ ಇಗೋ, ನನಗೆ ದ್ರೋಹ ಬಗೆಯುವವನು ನನ್ನೊಂದಿಗೆ ಇದೇ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದಾನೆ.</verse>
				<verse number="22">ನರಪುತ್ರನೇನೋ ದೈವೇಚ್ಛೆಯ ಪ್ರಕಾರ ಹೊರಟು ಹೋಗುತ್ತಾನೆ; ಆದರೆ ಆತನಿಗೆ ದ್ರೋಹಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ!” ಎಂದರು.</verse>
				<verse number="23">ಇದನ್ನು ಕೇಳಿದ ಶಿಷ್ಯರು ಇಂಥ ದುಷ್ಕೃತ್ಯಮಾಡುವವನು ತಮ್ಮಲ್ಲಿ ಯಾರಿರಬಹುದೆಂದು ಒಬ್ಬರನ್ನೊಬ್ಬರು ವಿಚಾರಿಸತೊಡಗಿದರು.</verse>
				<verse number="24">ತಮ್ಮಲ್ಲಿ ಅತಿ ಶ್ರೇಷ್ಠನು ಯಾರು ಎಂಬ ವಾದವಿವಾದವು ಶಿಷ್ಯರಲ್ಲಿ ಎದ್ದಿತು.</verse>
				<verse number="25">ಆಗ ಯೇಸುಸ್ವಾಮಿ, “ಲೌಕಿಕ ರಾಜರು ತಮ್ಮ ಪ್ರಜೆಗಳ ಮೇಲೆ ದೊರೆತನ ಮಾಡುತ್ತಾರೆ; ಅಧಿಕಾರ ನಡೆಸುವವರು ಧರ್ಮಿಷ್ಠರೆನಿಸಿಕೊಳ್ಳುತ್ತಾರೆ.</verse>
				<verse number="26">ಆದರೆ ನೀವು ಹಾಗಾಗಬಾರದು; ನಿಮ್ಮಲ್ಲಿ ಅತಿ ದೊಡ್ಡವನು ಅತಿ ಚಿಕ್ಕವನಂತಾಗಬೇಕು.</verse>
				<verse number="27">ಈ ಇಬ್ಬರಲ್ಲಿ ದೊಡ್ಡವನು ಯಾರು - ಊಟ ಮಾಡುವವನೋ? ಊಟ ಬಡಿಸುವವನೋ? ಖಂಡಿತವಾಗಿ ಊಟ ಮಾಡುವವನು. ಆದರೂ ಊಟ ಬಡಿಸುವ ಊಳಿಗದವನಂತೆ ನಾನು ನಿಮ್ಮ ನಡುವೆ ಇದ್ದೇನೆ.</verse>
				<verse number="28">“ನನ್ನ ಶೋಧನೆ-ವೇದನೆಗಳಲ್ಲಿ ನನ್ನನ್ನು ಬಿಟ್ಟಗಲದೆ ಇದ್ದವರು ನೀವು.</verse>
				<verse number="29">ನನ್ನ ಪಿತನು ನನಗೆ ರಾಜ್ಯಾಧಿಕಾರವನ್ನು ವಹಿಸಿರುವಂತೆ ನಾನೂ ನಿಮಗೆ ವಹಿಸುತ್ತೇನೆ.</verse>
				<verse number="30">ನನ್ನ ಸಾಮ್ರಾಜ್ಯದಲ್ಲಿ ನನ್ನ ಸಂಗಡ ಊಟ ಮಾಡುವಿರಿ. ಪಾನ ಮಾಡುವಿರಿ, ಮಾತ್ರವಲ್ಲ ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಸಿಂಹಾಸನಗಳ ಮೇಲೆ ಆಸೀನರಾಗುವಿರಿ.</verse>
				<verse number="31">“ಸಿಮೋನನೇ, ಸಿಮೋನನೇ, ಕೇಳು: ಗೋದಿಯನ್ನು ತೂರುವಂತೆ ಸೈತಾನನು ನಿಮ್ಮೆಲ್ಲರನ್ನೂ ಶೋಧಿಸಲು ಅಪ್ಪಣೆ ಕೇಳಿಕೊಂಡಿದ್ದಾನೆ.</verse>
				<verse number="32">ಆದರೆ, ನಾನು ನಿನ್ನ ವಿಶ್ವಾಸವು ಕುಂದದಂತೆ ನಿನಗಾಗಿ ಪ್ರಾರ್ಥನೆ ಮಾಡಿದ್ದೇನೆ. ನೀನು ಪರಿವರ್ತನೆ ಹೊಂದಿದ ನಂತರ ನಿನ್ನ ಸಹೋದರರನ್ನು ದೃಢಪಡಿಸು,” ಎಂದರು.</verse>
				<verse number="33">ಅದಕ್ಕೆ ಪೇತ್ರನು, “ಗುರುದೇವಾ, ನಿಮ್ಮ ಸಂಗಡ ಸೆರೆಗೆ ಹೋಗುವುದಕ್ಕೂ ಸಾಯುವುದಕ್ಕೂ ಸಿದ್ಧನಿದ್ದೇನೆ,” ಎಂದನು.</verse>
				<verse number="34">ಆಗ ಯೇಸು, “ಪೇತ್ರನೇ, ಇಂದು ಕೋಳಿಕೂಗುವ ಮೊದಲೇ ನನ್ನನ್ನು ಅರಿಯೆನೆಂದು ನೀನು ಮೂರು ಬಾರಿ ಬೊಂಕುವೆ, ಇದು ಖಂಡಿತ,” ಎಂದರು.</verse>
				<verse number="35">ಬಳಿಕ ಯೇಸುಸ್ವಾಮಿ, “ನಾನು ನಿಮ್ಮನ್ನು ಬುತ್ತಿ, ಜೋಳಿಗೆ, ಜೋಡು ಒಂದೂ ಇಲ್ಲದೆ ಕಳಿಸಿದಾಗ ನಿಮಗೇನಾದರೂ ಕೊರತೆ ಆಯಿತೇ?” ಎಂದು ಶಿಷ್ಯರನ್ನು ಕೇಳಿದರು. ಅದಕ್ಕೆ ಅವರು, “ಇಲ್ಲ,” ಎಂದು ಉತ್ತರಕೊಟ್ಟರು.</verse>
				<verse number="36">“ಆದರೆ ಈಗ ಬುತ್ತಿಯಿರುವವನು ಅದನ್ನು ತೆಗೆದುಕೊಳ್ಳಲಿ; ಜೋಳಿಗೆಯಿರುವವನು ಹಾಗೆಯೇ ಮಾಡಲಿ; ಮತ್ತು ಕತ್ತಿಯಿಲ್ಲದವನು ತನ್ನ ಹೊದಿಕೆಯನ್ನು ಮಾರಿ ಒಂದನ್ನು ಕೊಂಡುಕೊಳ್ಳಲಿ.</verse>
				<verse number="37">ಏಕೆಂದರೆ, ‘ಪಾತಕರಲ್ಲಿ ಒಬ್ಬನಂತೆ ಪರಿಗಣಿತನಾದನು,’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯ ನನ್ನಲ್ಲಿ ನೆರವೇರಬೇಕಾದುದು ಅಗತ್ಯ; ನನಗೆ ಸಂಬಂಧಪಟ್ಟಿದ್ದೆಲ್ಲಾ ಸಮಾಪ್ತಿಗೊಳ್ಳಲಿದೆ,” ಎಂದರು.</verse>
				<verse number="38">“ಗುರುವೇ, ಇಗೋ ಇಲ್ಲಿ ಎರಡು ಕತ್ತಿಗಳಿವೆ,” ಎಂದು ಶಿಷ್ಯರು ಹೇಳಲು ಯೇಸು, “ಅಷ್ಟು ಸಾಕು,” ಎಂದರು.</verse>
				<verse number="39">ಯೇಸುಸ್ವಾಮಿ ಅಲ್ಲಿಂದ ಹೊರಟು ವಾಡಿಕೆಯ ಪ್ರಕಾರ ಓಲಿವ್ ತೋಪಿನ ಗುಡ್ಡಕ್ಕೆ ಹೋದರು. ಶಿಷ್ಯರು ಅವರ ಹಿಂದೆ ಹೋದರು.</verse>
				<verse number="40">ಕ್ಲುಪ್ತಸ್ಥಳಕ್ಕೆ ಬಂದಾಗ ಯೇಸು ಅವರಿಗೆ, “ಪ್ರಲೋಭನೆಗೆ ಒಳಗಾಗದಂತೆ ಪ್ರಾರ್ಥನೆಮಾಡಿರಿ,” ಎಂದು ಹೇಳಿ,</verse>
				<verse number="41">ಒಂದು ಕಲ್ಲೆಸೆತದಷ್ಟು ದೂರ ಹೋಗಿ, ಮೊಣಕಾಲೂರಿ ಪ್ರಾರ್ಥನೆಮಾಡುತ್ತಾ,</verse>
				<verse number="42">“ಓ ಪಿತನೇ, ನಿಮಗೆ ಇಷ್ಟವಾದರೆ ಈ ಕಷ್ಟದ ಕೊಡವನ್ನು ನನ್ನಿಂದ ತೊಲಗಿಸಿರಿ. ಆದರೂ ನನ್ನ ಚಿತ್ತವಲ್ಲ, ನಿಮ್ಮ ಚಿತ್ತವೇ ನೆರವೇರಲಿ,” ಎಂದರು.</verse>
				<verse number="43">ಆಗ ಸ್ವರ್ಗದಿಂದ ದೂತನೊಬ್ಬನು ಯೇಸುವಿಗೆ ಪ್ರತ್ಯಕ್ಷವಾಗಿ ಅವರನ್ನು ಸಶಕ್ತರನ್ನಾಗಿ ಮಾಡಿದನು.</verse>
				<verse number="44">ಕಡುಯಾತನೆಯಲ್ಲಿದ್ದ ಅವರು ಇನ್ನೂ ಶ್ರದ್ಧೆಯಿಂದ ಪ್ರಾರ್ಥಿಸಿದರು. ಅವರ ಬೆವರು ರಕ್ತದ ಹನಿಯಂತೆ ತೊಟ್ಟುತೊಟ್ಟಾಗಿ ನೆಲದ ಮೇಲೆ ಬೀಳುತ್ತಿತ್ತು.</verse>
				<verse number="45">ಯೇಸು ಪ್ರಾರ್ಥನೆಯಿಂದ ಎದ್ದು ಶಿಷ್ಯರ ಬಳಿಗೆ ಬಂದರು. ಶಿಷ್ಯರಾದರೋ ದುಃಖದಿಂದ ಬಳಲಿ ನಿದ್ರಿಸುತ್ತಿದ್ದರು.</verse>
				<verse number="46">ಇದನ್ನು ಕಂಡು, “ನೀವು ನಿದ್ರಿಸುತ್ತೀರೇನು? ಎದ್ದು, ನೀವು ಪ್ರಲೋಭನೆಗೆ ಒಳಗಾಗದಂತೆ ಪ್ರಾರ್ಥನೆಮಾಡಿ,” ಎಂದರು.</verse>
				<verse number="47">ಯೇಸುಸ್ವಾಮಿ ಇನ್ನೂ ಮಾತನಾಡುತ್ತಿದ್ದ ಹಾಗೆ ಜನರ ಗುಂಪೊಂದು ಕಾಣಿಸಿಕೊಂಡಿತು. ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನು ಅವರಿಗೆ ಮುಂದಾಳಾಗಿ ಬಂದಿದ್ದನು. ಅವನು ಯೇಸುವಿಗೆ ಮುದ್ದಿಡಲು ಹತ್ತಿರ ಬಂದಾಗ,</verse>
				<verse number="48">ಯೇಸು, “ಯೂದಾ, ಮುದ್ದಿಟ್ಟು ನರಪುತ್ರನನ್ನು ತೋರಿಸಿಕೊಡುವೆಯಾ?” ಎಂದರು.</verse>
				<verse number="49">ಸುತ್ತಲಿದ್ದ ಶಿಷ್ಯರು ಮುಂದೇನಾಗುವುದೆಂದು ಅರಿತುಕೊಂಡು, “ಗುರುವೇ, ಕತ್ತಿಯಿಂದ ಕಡಿಯೋಣವೇ,” ಎಂದರು.</verse>
				<verse number="50">ತಕ್ಷಣವೇ ಅವರಲ್ಲಿ ಒಬ್ಬನು ಪ್ರಧಾನಯಾಜಕನ ಆಳನ್ನು ಹೊಡೆದು ಅವನ ಬಲಕಿವಿಯನ್ನು ಕತ್ತರಿಸಿಬಿಟ್ಟನು.</verse>
				<verse number="51">ಆಗ ಯೇಸು, “ಸಾಕು ನಿಲ್ಲಿಸು,” ಎಂದು ಹೇಳಿ ಅವನ ಕಿವಿಯನ್ನು ಮುಟ್ಟಿ ಗುಣಪಡಿಸಿದರು.</verse>
				<verse number="52">ಅನಂತರ ಯೇಸು ತಮ್ಮನ್ನು ಹಿಡಿಯುವುದಕ್ಕೆ ಬಂದಿದ್ದ ಮುಖ್ಯಯಾಜಕರನ್ನೂ ದೇವಾಲಯದ ಪಹರೆಯ ದಳಪತಿಗಳನ್ನೂ ಪ್ರಮುಖರನ್ನೂ ನೋಡಿ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಖಡ್ಗಗಳನ್ನು ಮತ್ತು ಲಾಠಿಗಳನ್ನು ತೆಗೆದುಕೊಂಡು ಬಂದಿರುವಿರೋ?</verse>
				<verse number="53">ನಾನು ಪ್ರತಿದಿನವೂ ಮಹಾದೇವಾಲಯದಲ್ಲಿ ನಿಮ್ಮ ನಡುವೆಯೇ ಇದ್ದೆ. ಆಗ ನೀವು ನನ್ನ ಮೇಲೆ ಕೈಮಾಡಲಿಲ್ಲ; ಆದರೆ ಇದು ನಿಮ್ಮ ಕಾಲ; ಅಂಧಕಾರ ದೊರೆತನ ಮಾಡುವ ಕರಾಳಕಾಲ,” ಎಂದರು.</verse>
				<verse number="54">ಅನಂತರ ಅವರು ಯೇಸುಸ್ವಾಮಿಯನ್ನು ಬಂಧಿಸಿ ಪ್ರಧಾನಯಾಜಕನ ಭವನಕ್ಕೆ ಕರೆದುಕೊಂಡು ಹೋದರು. ದೂರದಿಂದ ಪೇತ್ರನು ಹಿಂದೆಹಿಂದೆಯೇ ಹೋದನು.</verse>
				<verse number="55">ಭವನದ ಹೊರಾಂಗಣದ ನಡುವೆ ಬೆಂಕಿಮಾಡಿ ಅದರ ಸುತ್ತಲೂ ಅವರೆಲ್ಲರು ಕುಳಿತುಕೊಂಡಾಗ, ಪೇತ್ರನು ಅವರ ಸಂಗಡ ಸೇರಿ ಕುಳಿತುಕೊಂಡನು.</verse>
				<verse number="56">ಬೆಂಕಿಯ ಬೆಳಕಿನಲ್ಲಿ ಕುಳಿತಿದ್ದ ಆತನನ್ನು ದಾಸಿಯೊಬ್ಬಳು ದೃಷ್ಟಿಸಿ ನೋಡಿ, “ಇವನು ಕೂಡ ಯೇಸುವಿನ ಸಂಗಡ ಇದ್ದವನು,” ಎಂದಳು.</verse>
				<verse number="57">ಅದಕ್ಕೆ ಆತ, “ಅವನಾರೋ ನಾನರಿಯೆನಮ್ಮಾ,” ಎಂದು ನಿರಾಕರಿಸಿದನು.</verse>
				<verse number="58">ಸ್ವಲ್ಪಹೊತ್ತಾದ ಮೇಲೆ ಇನ್ನೊಬ್ಬನು ಆತನನ್ನು ಕಂಡು, “ನೀನು ಕೂಡ ಅವರಲ್ಲಿ ಒಬ್ಬನು,” ಎನ್ನಲು ಪೇತ್ರನು, “ಇಲ್ಲಪ್ಪಾ, ನಾನಲ್ಲ,” ಎಂದುಬಿಟ್ಟನು.</verse>
				<verse number="59">ಸುಮಾರು ಒಂದು ಗಂಟೆಕಾಲ ಕಳೆದ ಮೇಲೆ ಮತ್ತೊಬ್ಬನು, “ಖಂಡಿತವಾಗಿ ಇವನು ಕೂಡ ಯೇಸುವಿನ ಸಂಗಡ ಇದ್ದವನು. ಏಕೆಂದರೆ, ಇವನೂ ಗಲಿಲೇಯದವನೇ,” ಎಂದು ಒತ್ತಿ ಹೇಳಿದನು.</verse>
				<verse number="60">ಅದಕ್ಕೆ ಪೇತ್ರನು, “ನೀನು ಏನು ಹೇಳುತ್ತೀಯೋ ನನಗೆ ಅರ್ಥವಾಗುವುದಿಲ್ಲ,” ಎಂದನು. ಆಕ್ಷಣವೇ, ಅವನು ಇನ್ನೂ ಮಾತನಾಡುತ್ತಿರುವಾಗಲೇ, ಕೋಳಿ ಕೂಗಿತು.</verse>
				<verse number="61">ಆಗ ಪ್ರಭು ಯೇಸು ಹಿಂದಿರುಗಿ ಪೇತ್ರನನ್ನು ದಿಟ್ಟಿಸಿ ನೋಡಿದರು. “ಈ ದಿನ ಕೋಳಿ ಕೂಗುವ ಮೊದಲೇ, ‘ನಾನು ಆತನನ್ನು ಅರಿಯೆನು,’ ಎಂದು ನನ್ನನ್ನು ಮೂರು ಬಾರಿ ನಿರಾಕರಿಸುವೆ,” ಎಂದು ಯೇಸು ನುಡಿದಿದ್ದ ಮಾತುಗಳು ಪೇತ್ರನ ನೆನಪಿಗೆ ಬಂದುವು.</verse>
				<verse number="62">ಅವನು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.</verse>
				<verse number="63">ಯೇಸುಸ್ವಾಮಿಯನ್ನು ಬಂಧಿಸಿ ಹಿಡಿದುಕೊಂಡಿದ್ದವರು ಅವರನ್ನು ಅಣಕಿಸಿದರು, ಹೊಡೆದರು.</verse>
				<verse number="64">ಕಣ್ಣಿಗೆ ಬಟ್ಟೆ ಕಟ್ಟಿ, “ನಿನ್ನನ್ನು ಹೊಡೆದವರಾರು? ಪ್ರವಾದಿಸು,” ಎಂದು ಕೇಳುತ್ತಿದ್ದರು.</verse>
				<verse number="65">ಹಲವಾರು ವಿಧದಲ್ಲಿ ಅವರನ್ನು ದೂಷಿಸಿ ನಿಂದಿಸುತ್ತಿದ್ದರು.</verse>
				<verse number="66">ಅಷ್ಟರಲ್ಲಿ ಬೆಳಗಾಯಿತು. ಪ್ರಜಾಪ್ರಮುಖರೂ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಸಭೆ ಸೇರಿದರು. ಯೇಸುವನ್ನು ತಂದು ನ್ಯಾಯಸಭೆಯ ಮುಂದೆ ನಿಲ್ಲಿಸಿದರು.</verse>
				<verse number="67">“ನೀನು ಅಭಿಷಿಕ್ತನಾದ ಲೋಕೋದ್ಧಾರಕನಾಗಿದ್ದರೆ ನಮಗೆ ಹೇಳು,” ಎಂದು ವಿಚಾರಿಸಿದರು. ಆಗ ಯೇಸು, “ನಾನು ಹೇಳಿದರೆ ನೀವು ನನ್ನನ್ನು ನಂಬುವುದಿಲ್ಲ.</verse>
				<verse number="68">ನಾನೇ ಪ್ರಶ್ನೆಹಾಕಿದರೆ ನೀವು ನನಗೆ ಉತ್ತರಕೊಡುವುದೂ ಇಲ್ಲ.</verse>
				<verse number="69">ಇನ್ನು ಮುಂದೆ ನರಪುತ್ರನು ಸರ್ವಶಕ್ತ ದೇವರ ಬಲಗಡೆ ಆಸೀನನಾಗಿರುವನು,” ಎಂದರು.</verse>
				<verse number="70">ಅದಕ್ಕೆ ಅವರೆಲ್ಲರೂ, “ಹಾಗಾದರೆ, ನೀನು ದೇವರ ಪುತ್ರನೋ?’ ಎಂದು ಕೇಳಿದರು. “ನಾನು ಆತನೇ ಎಂದು ನೀವೇ ಹೇಳುತ್ತಿದ್ದೀರಿ,” ಎಂದು ಯೇಸು ಉತ್ತರಕೊಡಲು ಅವರು,</verse>
				<verse number="71">“ಇನ್ನೇನು ಸಾಕ್ಷಿ ಬೇಕು? ನಾವೇ ಇವನ ಬಾಯಿಂದ ಕೇಳಿದೆವಲ್ಲಾ,” ಎಂದರು.</verse>
			</chapter>
			<chapter number="23">
				<verse number="1">ಬಳಿಕ ಸಭೆಸೇರಿದ್ದವರೆಲ್ಲರೂ ಎದ್ದು ಯೇಸುಸ್ವಾಮಿಯನ್ನು ಪಿಲಾತನ ಬಳಿಗೆ ಕರೆದುತಂದರು.</verse>
				<verse number="2">ಅಲ್ಲಿ ಆತನ ಮುಂದೆ, “ಇವನು ರೋಮ್ ಚಕ್ರವರ್ತಿಗೆ ತೆರಿಗೆ ಕೊಡುವುದನ್ನು ನಿಷೇಧಿಸುತ್ತಾನೆ. ತಾನೇ ‘ಕ್ರಿಸ್ತ, ಒಬ್ಬ ಅರಸ,’ ಎಂದು ಹೇಳಿಕೊಳ್ಳುತ್ತಾನೆ. ಹೀಗೆ ನಮ್ಮ ಜನತೆ ದಂಗೆಯೇಳುವಂತೆ ಪ್ರಚೋದಿಸುತ್ತಾನೆ. ಇದನ್ನೆಲ್ಲಾ ನಾವು ಕಂಡುಹಿಡಿದಿದ್ದೇವೆ,” ಎಂದು ದೂರತೊಡಗಿದರು.</verse>
				<verse number="3">ಆಗ ಪಿಲಾತನು, “ನೀನು ಯೆಹೂದ್ಯರ ಅರಸನೋ?” ಎಂದು ಯೇಸುವನ್ನು ಪ್ರಶ್ನಿಸಿದನು. “ಅದು ನಿಮ್ಮ ಬಾಯಿಂದಲೇ ಬಂದಿದೆ,” ಎಂದು ಯೇಸು ಮರುನುಡಿದರು.</verse>
				<verse number="4">ಪಿಲಾತನು ಮುಖ್ಯಯಾಜಕರನ್ನೂ ಜನರ ಗುಂಪನ್ನೂ ನೋಡಿ, “ಈ ಮನುಷ್ಯರಲ್ಲಿ ಶಿಕ್ಷಾರ್ಹದೋಷ ಯಾವುದೂ ನನಗೆ ಕಾಣುವುದಿಲ್ಲ,” ಎಂದನು.</verse>
				<verse number="5">ಆದರೆ ಅವರು, “ಇವನು ಜುದೇಯ ನಾಡಿನಲ್ಲೆಲ್ಲಾ ಬೋಧನೆಮಾಡುತ್ತಾ ಕ್ರಾಂತಿಗೆ ಕರೆಗೊಡುತ್ತಾನೆ; ಗಲಿಲೇಯದಲ್ಲಿ ಪ್ರಾರಂಭಿಸಿ ಇಲ್ಲಿಯವರೆಗೂ ಬಂದಿದ್ದಾನೆ,” ಎಂದು ಒತ್ತಾಯಪೂರ್ವಕವಾಗಿ ಆರೋಪಿಸಿದರು.</verse>
				<verse number="6">ಇದನ್ನು ಕೇಳಿದಾಕ್ಷಣವೇ ಪಿಲಾತನು, “ಇವನು ಗಲಿಲೇಯದವನೋ?” ಎಂದು ವಿಚಾರಿಸಿದನು.</verse>
				<verse number="7">ಯೇಸುಸ್ವಾಮಿ ಹೆರೋದನ ಆಧಿಪತ್ಯಕ್ಕೆ ಒಳಪಟ್ಟವರೆಂದು ತಿಳಿದುಕೊಂಡು ಅವರನ್ನು ಆತನ ಬಳಿಗೆ ಕಳುಹಿಸಿದನು. ಹೆರೋದನು ಅದೇ ಸಮಯಕ್ಕೆ ಜೆರುಸಲೇಮಿಗೆ ಬಂದಿದ್ದನು.</verse>
				<verse number="8">ಯೇಸುಸ್ವಾಮಿಯನ್ನು ಕಂಡೊಡನೆ ಹೆರೋದನಿಗೆ ತುಂಬ ಸಂತೋಷವಾಯಿತು. ಆತನು ಅವರನ್ನು ಕಾಣಲು ಬಹಳ ದಿನಗಳಿಂದ ಕಾತರನಾಗಿದ್ದನು. ಏಕೆಂದರೆ ಅವರ ವಿಷಯವಾಗಿ ಈಗಾಗಲೇ ಎಷ್ಟೋ ಕೇಳಿದ್ದನು. ಅವರು ಯಾವುದಾದರೊಂದು ಪವಾಡಕಾರ್ಯ ಮಾಡುವುದನ್ನು ನೋಡಬೇಕೆಂಬ ಅಪೇಕ್ಷೆ ಆತನಿಗಿತ್ತು.</verse>
				<verse number="9">ಆದುದರಿಂದ ಆತನು ಯೇಸುವನ್ನು ಅನೇಕ ವಿಧವಾಗಿ ಪ್ರಶ್ನಿಸಿದನು. ಆದರೆ ಅವರು ಒಂದಕ್ಕೂ ಉತ್ತರಕೊಡಲಿಲ್ಲ.</verse>
				<verse number="10">ಇತ್ತ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಮುಂದೆಬಂದು ಅವರ ಮೇಲೆ ಪ್ರಬಲವಾಗಿ ದೋಷಾರೋಪಣೆ ಮಾಡತೊಡಗಿದರು.</verse>
				<verse number="11">ಕಡೆಗೆ ಹೆರೋದನು ತನ್ನ ಸೈನಿಕರೊಡನೆ ಸೇರಿ ಯೇಸುವನ್ನು ಅಣಕಿಸಿ ಅವಮಾನಪಡಿಸಿದನು. ರಾಜವಸ್ತ್ರವನ್ನು ವೇಷಭೂಷಣವಾಗಿ ಅವರಿಗೆ ತೊಡಿಸಿ ಪಿಲಾತನ ಬಳಿಗೆ ಮರಳಿ ಕಳುಹಿಸಿಕೊಟ್ಟನು.</verse>
				<verse number="12">ಅದುವರೆಗೂ ಪರಸ್ಪರ ವೈರಿಗಳಾಗಿದ್ದ ಹೆರೋದನು ಮತ್ತು ಪಿಲಾತನು ಅಂದೇ ಮಿತ್ರರಾದರು.</verse>
				<verse number="13">ಪಿಲಾತನು ಮುಖ್ಯಯಾಜಕರನ್ನೂ ಮುಖಂಡರನ್ನೂ ಜನರನ್ನೂ ಒಟ್ಟಾಗಿ ಕರೆಯಿಸಿ,</verse>
				<verse number="14">“ಜನರು ದಂಗೆಯೇಳುವಂತೆ ಈ ಮನುಷ್ಯ ಪ್ರೇರೇಪಿಸುತ್ತಾನೆಂದು ಇವನನ್ನು ನನ್ನ ಬಳಿಗೆ ಕರೆತಂದಿರಲ್ಲವೇ? ಇಗೋ, ನಿಮ್ಮ ಎದುರಿಗೇ ವಿಚಾರಣೆ ಮಾಡಿದ್ದೇನೆ; ಇವನಲ್ಲಿ ನೀವು ಆರೋಪಿಸುವಂಥ ದೋಷಗಳೊಂದೂ ನಮಗೆ ಕಾಣಲಿಲ್ಲ;</verse>
				<verse number="15">ಹೆರೋದ ಅರಸನಿಗೂ ಕಾಣಲಿಲ್ಲ; ಎಂದೇ ಇವನನ್ನು ಮರಳಿ ನನ್ನ ಬಳಿಗೆ ಕಳುಹಿಸಿಬಿಟ್ಟಿದ್ದಾರೆ. ಮರಣದಂಡನೆಗೆ ಗುರಿಯಾಗಿಸುವ ಯಾವುದನ್ನೂ ಇವನು ಮಾಡಿಲ್ಲ ಎಂಬುದು ಸ್ಪಷ್ಟವಾಗಿದೆ.</verse>
				<verse number="16">ಆದ್ದರಿಂದ ಇವನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು.</verse>
				<verse number="17">(ಪಾಸ್ಕಹಬ್ಬದ ಸಂದರ್ಭದಲ್ಲಿ ಜನರು ಕೇಳಿಕೊಂಡ ಒಬ್ಬ ಸೆರೆಯಾಳನ್ನು ಪಿಲಾತನು ಬಿಡುಗಡೆ ಮಾಡಬೇಕಾಗಿತ್ತು).</verse>
				<verse number="18">ಆದರೆ ಅವರೆಲ್ಲರೂ, “ಇವನನ್ನು ಮುಗಿಸಿಬಿಡಿ, ಬರಬ್ಬನನ್ನು ನಮಗೆ ಬಿಡುಗಡೆಮಾಡಿ,” ಎಂದು ಒಕ್ಕೊರಲಿನಿಂದ ಬೊಬ್ಬೆಹಾಕಿದರು.</verse>
				<verse number="19">ನಗರದಲ್ಲಿ ದಂಗೆ ಎಬ್ಬಿಸಿದ ಹಾಗೂ ಕೊಲೆಮಾಡಿದ ಕಾರಣ ಸೆರೆಯಲ್ಲಿ ಹಾಕಲಾಗಿದ್ದ ಬರಬ್ಬನೇ ಅವನು.</verse>
				<verse number="20">ಪಿಲಾತನು ಯೇಸುಸ್ವಾಮಿಯನ್ನು ಬಿಡುಗಡೆ ಮಾಡಬಯಸಿ ಮತ್ತೊಮ್ಮೆ ಜನರೊಡನೆ ಮಾತನಾಡಿ ನೋಡಿದನು.</verse>
				<verse number="21">ಅವರಾದರೋ, “ಇವನನ್ನು ಶಿಲುಬೆಗೇರಿಸಿ, ಇವನನ್ನು ಶಿಲುಬೆಗೇರಿಸಿ,” ಎಂದು ಆರ್ಭಟಿಸತೊಡಗಿದರು.</verse>
				<verse number="22">ಮೂರನೆಯ ಸಾರಿ ಪಿಲಾತನು, “ಏಕೆ? ಇವನೇನು ಕೇಡುಮಾಡಿದ್ದಾನೆ? ಇವನನ್ನು ಮರಣದಂಡನೆಗೆ ಗುರಿಪಡಿಸುವಂಥ ಅಪರಾಧ ಯಾವುದೂ ನನಗೆ ಕಂಡುಬರುವುದಿಲ್ಲ. ಆದ್ದರಿಂದ ಇವನನ್ನು ದಂಡಿಸಿ ಬಿಟ್ಟುಬಿಡುತ್ತೇನೆ,” ಎಂದನು.</verse>
				<verse number="23">ಆದರೂ ಅವರು ಅಧಿಕಾಧಿಕವಾಗಿ ಆರ್ಭಟಿಸುತ್ತಾ ಯೇಸುವನ್ನು ಶಿಲುಬೆಗೆ ಏರಿಸಲೇ ಬೇಕೆಂದು ಕೂಗಾಡಿದರು. ಕಟ್ಟಕಡೆಗೆ ಕೂಗಾಟಕ್ಕೇ ಗೆಲುವಾಯಿತು!</verse>
				<verse number="24">ಆ ಜನರ ಕೋರಿಕೆಯಂತೆಯೇ ಆಗಲೆಂದು ಪಿಲಾತನು ತೀರ್ಮಾನಿಸಿದನು.</verse>
				<verse number="25">ಅವರು ಕೇಳಿಕೊಂಡ ಪ್ರಕಾರ ಕೊಲೆಕಲಹಗಳ ನಿಮಿತ್ತ ಸೆರೆಯಲ್ಲಿದ್ದ ಬರಬ್ಬನನ್ನು ಬಿಡುಗಡೆ ಮಾಡಿದನು. ಯೇಸುವನ್ನಾದರೋ ಅವರ ಇಚ್ಛಾನುಸಾರಕ್ಕೆ ಬಿಟ್ಟುಬಿಟ್ಟನು.</verse>
				<verse number="26">ಸೈನಿಕರು ಯೇಸುಸ್ವಾಮಿಯನ್ನು ಕರೆದೊಯ್ಯುವಾಗ ಸಿರೇನ್ ಪಟ್ಟಣದ ಸಿಮೋನ ಎಂಬಾತ ಹಳ್ಳಿಯ ಕಡೆಯಿಂದ ಆ ಮಾರ್ಗವಾಗಿ ಬರುತ್ತಿದ್ದನು. ಅವನನ್ನು ಹಿಡಿದು ಶಿಲುಬೆಯನ್ನು ಹೊತ್ತು ಯೇಸುವಿನ ಹಿಂದೆ ಬರುವಂತೆ ಮಾಡಿದರು.</verse>
				<verse number="27">ಜನರ ದೊಡ್ಡ ಗುಂಪು ಯೇಸುವಿನ ಹಿಂದೆ ಹೊರಟಿತು. ಕೆಲವು ಮಹಿಳೆಯರು ಯೇಸುವಿಗಾಗಿ ದುಃಖಪಟ್ಟು, ಎದೆಬಡಿದುಕೊಂಡು ಗೋಳಾಡುತ್ತಾ, ಹಿಂಬಾಲಿಸುತ್ತಿದ್ದರು.</verse>
				<verse number="28">ಯೇಸು ಅವರ ಕಡೆ ತಿರುಗಿ, “ಜೆರುಸಲೇಮಿನ ಕುವರಿಯರೇ, ನನಗಾಗಿ ಅಳಬೇಡಿ; ನಿಮಗಾಗಿ, ನಿಮ್ಮ ಮಕ್ಕಳಿಗಾಗಿ ದುಃಖಿಸಿರಿ.</verse>
				<verse number="29">ಕಾಲವೊಂದು ಬರುವುದು; ಆಗ ಜನರು, ‘ಬಂಜೆಯರೇ ಭಾಗ್ಯವಂತರು! ಹೆರದವಳೇ, ಹಾಲೂಡಿಸದವಳೇ ಧನ್ಯಳು!’ ಎನ್ನುವರು.</verse>
				<verse number="30">ಅದೇ ಸಮಯದಲ್ಲಿ ‘ಪರ್ವತಗಳೇ, ನಮ್ಮನ್ನು ತುಳಿದುಬಿಡಿ; ಗುಡ್ಡಗಳೇ, ನಮ್ಮನ್ನು ನುಂಗಿಬಿಡಿ,’ ಎಂದು ಕೂಗಿಕೊಳ್ಳುವರು.</verse>
				<verse number="31">ಹಸಿಮರಕ್ಕೇ ಇಷ್ಟೆಲ್ಲಾ ಮಾಡಿದರೆ ಒಣಮರಕ್ಕಾಗುವ ಗತಿಯಾದರೂ ಏನು!” ಎಂದರು.</verse>
				<verse number="32">ಯೇಸುವಿನ ಸಂಗಡ ಕೊಲ್ಲುವುದಕ್ಕಾಗಿ ಇಬ್ಬರು ಅಪರಾಧಿಗಳನ್ನೂ ಕೊಂಡೊಯ್ಯುತ್ತಿದ್ದರು.</verse>
				<verse number="33">‘ಕಪಾಲ’ ಎಂಬ ಸ್ಥಳಕ್ಕೆ ಬಂದು ಸೇರಿದ ಮೇಲೆ ಯೇಸುಸ್ವಾಮಿಯನ್ನು ಶಿಲುಬೆಗೆ ಏರಿಸಿದರು. ಆ ಇಬ್ಬರು ಅಪರಾಧಿಗಳಲ್ಲಿ ಒಬ್ಬನನ್ನು ಅವರ ಬಲಗಡೆಯಲ್ಲೂ ಮತ್ತೊಬ್ಬನನ್ನು ಎಡಗಡೆಯಲ್ಲೂ ಶಿಲುಬೆಗೇರಿಸಿದರು.</verse>
				<verse number="34">ಆಗ ಯೇಸು, “ಪಿತನೇ, ಇವರನ್ನು ಕ್ಷಮಿಸಿ; ತಾವೇನು ಮಾಡುತ್ತಿರುವರೆಂದು ಇವರು ಅರಿಯರು,” ಎಂದರು. ಸೈನಿಕರಾದರೋ ಯೇಸುವಿನ ಬಟ್ಟೆಗಳನ್ನು ಚೀಟುಹಾಕಿ ಹಂಚಿಕೊಂಡರು.</verse>
				<verse number="35">ಜನರು ನೋಡುತ್ತಾ ನಿಂತಿದ್ದರು. ಅಲ್ಲಿದ್ದ ಮುಖಂಡರು ಯೇಸುವನ್ನು ಮೂದಲಿಸುತ್ತಾ, “ಇವನು ಇತರರನ್ನು ರಕ್ಷಿಸಿದ; ಇವನು ದೇವರಿಂದಲೇ ಅಭಿಷಿಕ್ತನಾದ ಲೋಕೋದ್ಧಾರಕನು ಮತ್ತು ಅವರಿಂದಲೇ ಆಯ್ಕೆಯಾದವನು ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ,” ಎಂದರು.</verse>
				<verse number="36">ಸೈನಿಕರು ಮುಂದೆ ಬಂದು ಹುಳಿರಸವನ್ನು ಅವರತ್ತ ಒಡ್ಡಿ,</verse>
				<verse number="37">“ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ನೀನೇ ರಕ್ಷಿಸಿಕೊ,” ಎಂದು ಅಣಕಿಸುತ್ತಿದ್ದರು.</verse>
				<verse number="38">ಯೇಸುವಿನ ಶಿಲುಬೆಯ ಮೇಲ್ಗಡೆ, “ಇವನು ಯೆಹೂದ್ಯರ ಅರಸ” ಎಂಬ ಲಿಖಿತವಿತ್ತು.</verse>
				<verse number="39">ತೂಗುಹಾಕಿದ್ದ ಅಪರಾಧಿಗಳಲ್ಲಿ ಒಬ್ಬನು, “ನೀನು ಕ್ರಿಸ್ತ, ಅಲ್ಲವೆ? ಹಾಗಾದರೆ ನಿನ್ನನ್ನು ನೀನೇ ರಕ್ಷಿಸಿಕೋ, ನಮ್ಮನ್ನೂ ರಕ್ಷಿಸು,” ಎಂದು ಹಂಗಿಸಿದನು.</verse>
				<verse number="40">ಆದರೆ ಮತ್ತೊಬ್ಬ ಅಪರಾಧಿ ಅವನನ್ನು ಖಂಡಿಸುತ್ತಾ, “ನಿನಗೆ ದೇವರ ಭಯಬೇಡವೇ? ನೀನು ಸಹ ಇದೇ ಶಿಕ್ಷೆಗೆ ಗುರಿಯಾಗಿರುವೆ;</verse>
				<verse number="41">ನಮಗೇನೋ ಶಿಕ್ಷೆ ನ್ಯಾಯವಾಗಿದೆ, ನಮ್ಮ ಕೃತ್ಯಕ್ಕೆ ತಕ್ಕ ಫಲ ಸಿಕ್ಕಿದೆ; ಇವರಾದರೋ, ನಿರಪರಾಧಿ!” ಎಂದನು.</verse>
				<verse number="42">ಬಳಿಕ ಅವನು, “ಸ್ವಾಮಿ ಯೇಸುವೇ, ನೀವು ರಾಜ್ಯಾಧಿಕಾರದೊಡನೆ ಬರುವಾಗ ನನ್ನನ್ನು ಜ್ಞಾಪಿಸಿಕೊಳ್ಳಿ,” ಎಂದು ಬೇಡಿಕೊಂಡನು.</verse>
				<verse number="43">ಅವನಿಗೆ ಯೇಸು, “ಇಂದೇ ನೀನು ನನ್ನೊಡನೆ ಪರಂಧಾಮದಲ್ಲಿರುವೆ ಎಂದು ನಿಶ್ಚಯವಾಗಿ ಹೇಳುತ್ತೇನೆ,” ಎಂದರು.</verse>
				<verse number="44">ಆಗ ಸುಮಾರು ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ಸೂರ್ಯನು ಕಾಂತಿಹೀನನಾದನು; ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.</verse>
				<verse number="45">ಮಹಾದೇವಾಲಯದ ತೆರೆಯು ಇಬ್ಭಾಗವಾಗಿ ಸೀಳಿಹೋಯಿತು.</verse>
				<verse number="46">ಯೇಸುಸ್ವಾಮಿ, “ಪಿತನೇ, ನನ್ನಾತ್ಮವನ್ನು ನಿಮ್ಮ ಕೈಗೊಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.</verse>
				<verse number="47">ನಡೆದುದನ್ನು ಕಂಡ ಶತಾಧಿಪತಿ ದೇವರನ್ನು ಹೊಗಳುತ್ತಾ, “ಈ ಮನುಷ್ಯ ಖಂಡಿತವಾಗಿ ಸತ್ಪುರುಷನೇ ಸರಿ,” ಎಂದನು.</verse>
				<verse number="48">ಈ ದೃಶ್ಯವನ್ನು ನೋಡಲು ಕೂಡಿದ್ದ ಜನರೆಲ್ಲರು ಅಲ್ಲಿ ನಡೆದುದನ್ನು ನೋಡಿ ದುಃಖದಿಂದ ಎದೆಬಡಿದುಕೊಳ್ಳುತ್ತಾ ಹಿಂದಿರುಗಿದರು.</verse>
				<verse number="49">ಯೇಸುವಿನ ಪರಿಚಿತರೆಲ್ಲರು ಹಾಗೂ ಗಲಿಲೇಯದಿಂದ ಹಿಂಬಾಲಿಸಿ ಬಂದಿದ್ದ ಮಹಿಳೆಯರು ದೂರದಲ್ಲಿ ನಿಂತುಕೊಂಡು ಇದೆಲ್ಲವನ್ನು ನೋಡುತ್ತಿದ್ದರು.</verse>
				<verse number="50">ಅರಿಮತಾಯ ಎಂಬುದು ಜುದೇಯದ ಒಂದು ಪಟ್ಟಣ. ಜೋಸೆಫನು ಇದರ ನಿವಾಸಿ. ಇವನು ಸದ್ಗುಣಶೀಲನು, ಸತ್ಪುರುಷನು ಹಾಗೂ ದೇವರ ಸಾಮ್ರಾಜ್ಯದ ಆಗಮನವನ್ನು ನಿರೀಕ್ಷಿಸುತ್ತಿದ್ದವನು. ಯೆಹೂದ್ಯರ ನ್ಯಾಯಸಭೆಯ ಸದಸ್ಯರಲ್ಲಿ ಇವನೂ ಒಬ್ಬನು. ಆದರೂ ಅವರ ತೀರ್ಪಿಗೂ ಕೃತ್ಯಕ್ಕೂ ಇವನು ಅನುಮತಿಸಿರಲಿಲ್ಲ.</verse>
				<verse number="51"></verse>
				<verse number="52">ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ಪಾರ್ಥಿವ ಶರೀರವನ್ನು ತನಗೆ ಕೊಡಿಸಬೇಕೆಂದು ಕೇಳಿಕೊಂಡನು.</verse>
				<verse number="53">ತರುವಾಯ ಶರೀರವನ್ನು ಶಿಲುಬೆಯಿಂದ ಇಳಿಸಿ, ನಾರುಮಡಿವಸ್ತ್ರದಲ್ಲಿ ಸುತ್ತಿ ಸಮಾಧಿಯಲ್ಲಿ ಇಟ್ಟನು. ಬಂಡೆಯೊಂದರಲ್ಲಿ ಕೊರೆಯಲಾಗಿದ್ದ ಈ ಸಮಾಧಿಯಲ್ಲಿ ಅದುವರೆಗೆ ಯಾರನ್ನೂ ಭೂಸ್ಥಾಪನೆ ಮಾಡಿರಲಿಲ್ಲ.</verse>
				<verse number="54">ಅಂದು ಶುಕ್ರವಾರ - ಸಿದ್ಧತೆಯ ದಿನ. ಇನ್ನೇನು ಸಬ್ಬತ್ ಪ್ರಾರಂಭವಾಗುವುದರಲ್ಲಿತ್ತು.</verse>
				<verse number="55">ಗಲಿಲೇಯದಿಂದ ಯೇಸುವಿನ ಸಂಗಡ ಬಂದಿದ್ದ ಮಹಿಳೆಯರು ಜೋಸೆಫನ ಜೊತೆ ಹೋಗಿ ಸಮಾಧಿಯನ್ನೂ ಯೇಸುವಿನ ಪಾರ್ಥಿವ ಶರೀರವನ್ನು ಅದರಲ್ಲಿಟ್ಟ ರೀತಿಯನ್ನೂ ನೋಡಿಕೊಂಡರು.</verse>
				<verse number="56">ಅನಂತರ ಅಲ್ಲಿಂದ ಹಿಂದಿರುಗಿ ಶವಲೇಪನಕ್ಕಾಗಿ ಸುಗಂಧದ್ರವ್ಯಗಳನ್ನು ಮತ್ತು ಪರಿಮಳ ತೈಲವನ್ನು ಸಿದ್ಧಮಾಡಿಕೊಂಡರು. ಸಬ್ಬತ್‍ದಿನ, ಧರ್ಮನಿಯಮಾನುಸಾರ ವಿಶ್ರಮಿಸಿಕೊಂಡರು.</verse>
			</chapter>
			<chapter number="24">
				<verse number="1">ಭಾನುವಾರ ಮುಂಜಾನೆ ಆ ಮಹಿಳೆಯರು ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಯ ಬಳಿಗೆ ಬಂದರು.</verse>
				<verse number="2">ಸಮಾಧಿಯ ದ್ವಾರಕ್ಕೆ ಮುಚ್ಚಿದ್ದ ಕಲ್ಲು ಅಲ್ಲಿಂದ ಉರುಳಿ ಬಿದ್ದಿತ್ತು.</verse>
				<verse number="3">ಒಳಕ್ಕೆ ಪ್ರವೇಶಿಸಿ ನೋಡಿದಾಗ ಪ್ರಭು ಯೇಸುವಿನ ಪಾರ್ಥಿವ ಶರೀರ ಕಾಣಲಿಲ್ಲ.</verse>
				<verse number="4">ಅವರು ತಬ್ಬಿಬ್ಬಾಗಿ ಅಲ್ಲೇ ನಿಂತರು. ಆಗ ತೇಜೋಮಯವಾದ ಉಡುಪನ್ನು ಧರಿಸಿದ್ದ ಇಬ್ಬರು ವ್ಯಕ್ತಿಗಳು ಫಕ್ಕನೆ ಅಲ್ಲೇ ಕಾಣಿಸಿಕೊಂಡರು.</verse>
				<verse number="5">ಮಹಿಳೆಯರು ಭಯಭ್ರಾಂತರಾದರು. ಅವರ ದೃಷ್ಟಿ ನೆಲನಾಟಿತು. ಆಗ ಆ ವ್ಯಕ್ತಿಗಳು, “ಸಜೀವವಾಗಿರುವವರನ್ನು ಸತ್ತವರ ಮಧ್ಯೆ ಹುಡುಕುವುದೇನು? ಅವರು ಇಲ್ಲಿಲ್ಲ; ಪುನರುತ್ಥಾನ ಹೊಂದಿದ್ದಾರೆ.</verse>
				<verse number="6">ಗಲಿಲೇಯದಲ್ಲಿದ್ದಾಗಲೇ ಅವರು ನಿಮಗೆ,</verse>
				<verse number="7">‘ನರಪುತ್ರನು ಪಾಪಿಮಾನವರ ಕೈವಶವಾಗಿ, ಶಿಲುಬೆಯ ಮರಣಕ್ಕೀಡಾಗಿ, ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿದೆ,’ ಎಂದು ತಿಳಿಸಿದ್ದನ್ನು ಮರೆತುಬಿಟ್ಟಿರೋ?” ಎಂದರು.</verse>
				<verse number="8">ಆಗ ಆ ಮಹಿಳೆಯರಿಗೆ ಯೇಸುಸ್ವಾಮಿಯ ಈ ಮಾತುಗಳು ಜ್ಞಾಪಕಕ್ಕೆ ಬಂದವು.</verse>
				<verse number="9">ಅವರು ಸಮಾಧಿಯಿಂದ ಹಿಂದಿರುಗಿಹೋಗಿ ನಡೆದುದೆಲ್ಲವನ್ನು ಹನ್ನೊಂದು ಮಂದಿ ಶಿಷ್ಯರಿಗೂ ಮತ್ತಿತರರಿಗೂ ತಿಳಿಸಿದರು.</verse>
				<verse number="10">ಆ ಮಹಿಳೆಯರ ಹೆಸರುಗಳು: ಮಗ್ದಲದ ಮರಿಯಳು, ಯೊವಾನ್ನಳು ಮತ್ತು ಯಕೋಬನ ತಾಯಿಯಾದ ಮರಿಯಳು. ಇವರಲ್ಲದೆ, ಇವರ ಸಂಗಡ ಇದ್ದ ಇತರ ಮಹಿಳೆಯರೂ ಪ್ರೇಷಿತರಿಗೆ ಈ ಸುದ್ದಿಯನ್ನು ತಿಳಿಸಿದರು.</verse>
				<verse number="11">ಪ್ರೇಷಿತರಾದರೋ ಇದೆಲ್ಲ ಕಟ್ಟುಕತೆಯೆಂದು ಭಾವಿಸಿ ನಂಬದೆಹೋದರು.</verse>
				<verse number="12">ಆದರೆ ಪೇತ್ರನು ಎದ್ದು ಸಮಾಧಿಯ ಬಳಿಗೆ ಧಾವಿಸಿದನು. ಸಮಾಧಿಯೊಳಕ್ಕೆ ಬಗ್ಗಿನೋಡಿದಾಗ, ಶವಕ್ಕೆ ಸುತ್ತಿದ್ದ ನಾರುಮಡಿ ವಸ್ತ್ರಗಳು ಮಾತ್ರ ಅಲ್ಲಿ ಬಿದ್ದಿರುವುದನ್ನು ಕಂಡನು. ಇವೆಲ್ಲಾ ಎಷ್ಟೋ ಆಶ್ಚರ್ಯಕರವಾಗಿದೆ ಎಂದುಕೊಂಡು ಹಿಂದಿರುಗಿದನು.</verse>
				<verse number="13">ಅದೇ ದಿನ ಶಿಷ್ಯರಲ್ಲಿ ಇಬ್ಬರು ಜೆರುಸಲೇಮಿಗೆ ಹನ್ನೊಂದು ಕಿಲೊಮೀಟರಿನಷ್ಟು ದೂರದಲ್ಲಿದ್ದ ಎಮ್ಮಾವು ಎಂಬ ಗ್ರಾಮಕ್ಕೆ ಹೋಗುತ್ತಿದ್ದರು.</verse>
				<verse number="14">ಇತ್ತೀಚೆಗೆ ನಡೆದ ವಿಷಯಗಳನ್ನೆಲ್ಲಾ ಕುರಿತು ಅವರು ಸಂಭಾಷಣೆ ಮಾಡುತ್ತಾ ನಡೆಯುತ್ತಿದ್ದರು.</verse>
				<verse number="15">ಹೀಗೆ ಮಾತನಾಡಿಕೊಂಡು ಚರ್ಚೆಮಾಡುತ್ತಾ ಹೋಗುತ್ತಿರುವಾಗ, ಯೇಸುಸ್ವಾಮಿಯೇ ಖುದ್ದಾಗಿ ಸಮೀಪಿಸಿ ಅವರ ಜೊತೆ ಸೇರಿಕೊಂಡರು.</verse>
				<verse number="16">ಆದರೆ ಇವರಾರೆಂದು ಅವರು ಗುರುತು ಹಚ್ಚಲಿಲ್ಲ. ಕಾರಣ - ಶಿಷ್ಯರಿಗೆ ಕಣ್ಣುಕಟ್ಟಿದಂತಾಗಿತ್ತು.</verse>
				<verse number="17">“ನೀವು ತರ್ಕಮಾಡಿಕೊಂಡು ಹೋಗುತ್ತಿರುವಿರಲ್ಲಾ, ಏನು ವಿಷಯ?” ಎಂದು ಯೇಸು ಕೇಳಿದರು. ಶಿಷ್ಯರು ಸಪ್ಪೆ ಮುಖಮಾಡಿ ನಿಂತರು.</verse>
				<verse number="18">ಆಗ ಅವರಲ್ಲಿ ಒಬ್ಬನಾದ ಕ್ಲೆಯೋಫ, “ಇತ್ತೀಚೆಗೆ ಜೆರುಸಲೇಮಿನಲ್ಲಿ ಜರುಗಿದ ಘಟನೆಗಳನ್ನು ಪಟ್ಟಣಕ್ಕೆ ಪಟ್ಟಣವೇ ತಿಳಿದಿದೆ; ನಿನಗೊಬ್ಬನಿಗೇ ಅವು ತಿಳಿಯದೆ?” ಎಂದನು.</verse>
				<verse number="19">“ಏನು ನಡೆಯಿತು?” ಎಂದು ಯೇಸು ಪುನಃ ಕೇಳಿದಾಗ ಆ ಶಿಷ್ಯರಿಬ್ಬರು, “ಇವು ನಜರೇತಿನ ಯೇಸುವಿಗೆ ಸಂಭವಿಸಿದ ಘಟನೆಗಳು. ಅವರು ನಡೆಯಲ್ಲೂ ನುಡಿಯಲ್ಲೂ ದೇವರ ಹಾಗೂ ಸಕಲ ಮಾನವರ ದೃಷ್ಟಿಯಲ್ಲಿ ಪ್ರವಾದಿಯಾಗಿದ್ದರು.</verse>
				<verse number="20">ನಮ್ಮ ಮುಖ್ಯಯಾಜಕರು ಮತ್ತು ಮುಖಂಡರು ಅವರನ್ನು ಮರಣದಂಡನೆಗೆ ಗುರಿಮಾಡಿಸಿ ಶಿಲುಬೆಗೆ ಜಡಿಸಿದರು.</verse>
				<verse number="21">ಇಸ್ರಯೇಲನ್ನು ಬಿಡುಗಡೆಮಾಡುವ ಉದ್ಧಾರಕ ಅವರೇ ಎಂದು ನಾವು ನಂಬಿಕೊಂಡಿದ್ದೆವು. ಇಷ್ಟುಮಾತ್ರವಲ್ಲ, ಇದೆಲ್ಲಾ ಸಂಭವಿಸಿ ಇಂದಿಗೆ ಮೂರು ದಿನಗಳು ಆಗಿವೆ.</verse>
				<verse number="22">ಆದರೂ ನಮ್ಮಲ್ಲಿ ಕೆಲವುಮಂದಿ ಮಹಿಳೆಯರು ಮುಂಜಾನೆ ಸಮಾಧಿಯ ಬಳಿಗೆ ಹೋಗಿದ್ದರು.</verse>
				<verse number="23">ಅಲ್ಲಿ ಯೇಸುವಿನ ಪಾರ್ಥಿವ ಶರೀರವನ್ನು ಕಾಣಲಿಲ್ಲ. ಹಿಂದಿರುಗಿ ಬಂದು, ‘ನಮಗೆ ದೇವದೂತರು ಪ್ರತ್ಯಕ್ಷರಾದರು; ಇವರು ಯೇಸುಸ್ವಾಮಿ ಸಜೀವದಿಂದ ಇದ್ದಾರೆಂದು ನಮಗೆ ತಿಳಿಸಿದರು,’ ಎಂದು ಹೇಳಿ ನಮ್ಮನ್ನು ದಿಗ್ಭ್ರಾಂತರನ್ನಾಗಿ ಮಾಡಿದರು.</verse>
				<verse number="24">ನಮ್ಮ ಸಂಗಡಿಗರಲ್ಲಿ ಕೆಲವರು ಸಮಾಧಿಯ ಬಳಿಗೆ ಹೋಗಿ ನೋಡಿದರು; ಮಹಿಳೆಯರು ಹೇಳಿದ್ದೆಲ್ಲಾ ಸರಿಯಾಗಿತ್ತು. ಆದರೆ ಯೇಸುಸ್ವಾಮಿಯನ್ನು ಮಾತ್ರ ಕಾಣಲಿಲ್ಲ,” ಎಂದರು.</verse>
				<verse number="25">ಆಗ ಯೇಸು, “ಎಂಥ ಮತಿಹೀನರು ನೀವು! ಪ್ರವಾದಿಗಳು ಹೇಳಿರುವುದೆಲ್ಲವನ್ನು ನಂಬುವುದರಲ್ಲಿ ಎಷ್ಟು ಮಂದಮತಿಗಳು ನೀವು!</verse>
				<verse number="26">ಕ್ರಿಸ್ತನು ಇಂತಹ ಸಂಕಷ್ಟಗಳನ್ನು ಅನುಭವಿಸಿ ತನ್ನ ಮಹಿಮಾಸಿದ್ಧಿಯನ್ನು ಪಡೆಯಬೇಕಿತ್ತು ಅಲ್ಲವೇ?” ಎಂದರು.</verse>
				<verse number="27">ಅನಂತರ, ಮೋಶೆ ಹಾಗೂ ಪ್ರವಾದಿಗಳೆಲ್ಲರಿಂದ ಆರಂಭಿಸಿ ಎಲ್ಲಾ ಪವಿತ್ರಗ್ರಂಥಗಳಲ್ಲಿ ತಮ್ಮ ವಿಷಯವಾಗಿ ಬರೆದಿರುವುದನ್ನು ಅವರಿಗೆ ವಿವರಿಸಿದರು.</verse>
				<verse number="28">ಅಷ್ಟರಲ್ಲಿ ಶಿಷ್ಯರು ತಲುಪಬೇಕಾಗಿದ್ದ ಗ್ರಾಮವು ಸಮೀಪಿಸಿತು. ಯೇಸುಸ್ವಾಮಿ ಇನ್ನೂ ಮುಂದಕ್ಕೆ ಸಾಗುವವರಂತೆ ಕಂಡಿತು.</verse>
				<verse number="29">ಆಗ ಶಿಷ್ಯರು, “ಸಂಜೆಯಾಯಿತು, ಕತ್ತಲಾಗುತ್ತ ಬಂದಿತು; ಬಂದು ನಮ್ಮೊಡನೆ ತಂಗಿರಿ,” ಎಂದು ಒತ್ತಾಯಪಡಿಸಿದರು. ಯೇಸು ಅವರೊಡನೆ ತಂಗಲು ಹೋದರು.</verse>
				<verse number="30">ಅವರ ಸಂಗಡ ಊಟಕ್ಕೆ ಕುಳಿತಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು, ದೇವರಿಗೆ ಕೃತಜ್ಞತಾಸ್ತೋತ್ರ ಸಲ್ಲಿಸಿ, ಅದನ್ನು ಮುರಿದು ಅವರಿಗೆ ಕೊಟ್ಟರು.</verse>
				<verse number="31">ಆಗಲೇ ಶಿಷ್ಯರ ಕಣ್ಣುಗಳು ತೆರೆದವು; ಯೇಸುವನ್ನು ಗುರುತುಹಚ್ಚಿದರು. ಆಗ ಯೇಸು ಅವರಿಂದ ಅದೃಶ್ಯರಾದರು.</verse>
				<verse number="32">ಶಿಷ್ಯರು ಒಬ್ಬರಿಗೊಬ್ಚರು ಮಾತನಾಡಿಕೊಳ್ಳುತ್ತಾ, “ದಾರಿಯಲ್ಲಿ ಇವರು ನಮ್ಮ ಸಂಗಡ ಮಾತನಾಡುತ್ತಾ ಪವಿತ್ರಗ್ರಂಥದ ಅರ್ಥವನ್ನು ನಮಗೆ ವಿವರಿಸುತ್ತಾ ಇದ್ದಾಗ ನಮ್ಮ ಹೃದಯ ಕುತೂಹಲದಿಂದ ಕುದಿಯುತ್ತಾ ಇತ್ತಲ್ಲವೆ?” ಎಂದುಕೊಂಡರು.</verse>
				<verse number="33">ಒಡನೇ ಅವರು ಅಲ್ಲಿಂದ ಎದ್ದು ಜೆರುಸಲೇಮಿಗೆ ಹಿಂದಿರುಗಿ ಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡಿಗರೂ ಒಟ್ಟುಗೂಡಿದ್ದರು.</verse>
				<verse number="34">“ಪ್ರಭು ಜೀವಂತರಾಗಿ ಎದ್ದಿರುವುದು ನಿಜ! ಅವರು ಸಿಮೋನನಿಗೆ ಕಾಣಿಸಿಕೊಂಡರು,” ಎಂದು ಅಲ್ಲಿದ್ದವರು ಹೇಳುವುದನ್ನು ಕೇಳಿದರು.</verse>
				<verse number="35">ಆಗ ಅವರು ತಾವು ದಾರಿಯಲ್ಲಿ ಕಂಡ ವಿಷಯವನ್ನೂ ರೊಟ್ಟಿಮುರಿದು ಕೊಡುವಾಗ ಸ್ವಾಮಿಯನ್ನು ತಾವು ಗುರುತುಹಚ್ಚಿದ ವಿಷಯವನ್ನೂ ಅಲ್ಲಿದ್ದವರಿಗೆ ವರದಿಮಾಡಿದರು.</verse>
				<verse number="36">ಅವರು ವರದಿಮಾಡುತ್ತಿದ್ದಂತೆ ಯೇಸುಸ್ವಾಮಿಯೇ ಅವರ ಮಧ್ಯೆ ಪ್ರತ್ಯಕ್ಷವಾಗಿ ನಿಂತು, ‘ನಿಮಗೆ ಶಾಂತಿ,’ ಎಂದರು.</verse>
				<verse number="37">ಅವರೆಲ್ಲರೂ ಚಕಿತರಾಗಿ, ದಿಗಿಲುಗೊಂಡು, ತಾವು ಕಾಣುತ್ತಿರುವುದು ಭೂತವೆಂದು ಭಾವಿಸಿದರು.</verse>
				<verse number="38">ಆಗ ಯೇಸು, “ಏಕೆ ಕಳವಳಪಡುತ್ತೀರಿ? ನಿಮ್ಮ ಮನಸ್ಸಿನಲ್ಲಿ ಸಂಶಯವೇಕೆ?</verse>
				<verse number="39">ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿ, ನಾನೇ ಅಲ್ಲವೇ? ನನ್ನನ್ನು ಮುಟ್ಟಿ ನೋಡಿರಿ, ನೀವು ನನ್ನಲ್ಲಿ ಕಾಣುವಂತೆ, ಮಾಂಸ ಮತ್ತು ಎಲುಬು ಭೂತಕ್ಕೆ ಇರುವುದಿಲ್ಲ,” ಎಂದರು. (</verse>
				<verse number="40">ಇಂತೆಂದ ಮೇಲೆ ತಮ್ಮ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದರು).</verse>
				<verse number="41">ಶಿಷ್ಯರು ಇನ್ನೂ ನಂಬದೆ, ಆನಂದಾಶ್ಚರ್ಯಭರಿತರಾಗಿದ್ದರು. ಆಗ ಯೇಸು, “ನಿಮ್ಮಲ್ಲಿ ತಿನ್ನಲು ಏನಾದರೂ ಇದೆಯೇ?’ ಎಂದು ಕೇಳಿದರು.</verse>
				<verse number="42">ಹುರಿದ ಮೀನಿನ ತುಂಡು ಒಂದನ್ನು ಶಿಷ್ಯರು ಕೊಟ್ಟರು.</verse>
				<verse number="43">ಯೇಸು ಅದನ್ನು ತೆಗೆದುಕೊಂಡು ಅವರ ಎದುರಿಗೇ ತಿಂದರು.</verse>
				<verse number="44">ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥಗಳಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು.</verse>
				<verse number="45">ಆಮೇಲೆ, ಪವಿತ್ರಗ್ರಂಥವನ್ನು ಅವರು ಅರ್ಥಮಾಡಿಕೊಳ್ಳುವಂತೆ ಅವರ ಬುದ್ಧಿಯನ್ನು ವಿಕಾಸಗೊಳಿಸಿದರು.</verse>
				<verse number="46">ಅನಂತರ, “ಮೊದಲೇ ಬರೆದಿರುವ ಪ್ರಕಾರ ಕ್ರಿಸ್ತನು ಯಾತನೆಯನ್ನು ಅನುಭವಿಸಿ ಸತ್ತು ಮೂರನೆಯ ದಿನ ಪುನರುತ್ಥಾನ ಹೊಂದಬೇಕಾಗಿತ್ತು;</verse>
				<verse number="47">ಅಲ್ಲದೆ ಜನರು ಪಾಪಪರಿಹಾರ ಪಡೆಯಬೇಕಾದರೆ, ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖರಾಗಿ, ದೈವಾಭಿಮುಖಿಗಳಾಗಬೇಕೆಂತಲೂ ಈ ಸಂದೇಶವನ್ನು ಜೆರುಸಲೇಮಿನಿಂದ ಮೊದಲ್ಗೊಂಡು ಎಲ್ಲಾ ಜನಾಂಗಗಳಿಗೂ ಆತನ ಹೆಸರಿನಲ್ಲೇ ಪ್ರಕಟಿಸಬೇಕೆಂತಲೂ ಮೊದಲೇ ಲಿಖಿತವಾಗಿತ್ತು.</verse>
				<verse number="48">ಇದಕ್ಕೆಲ್ಲಾ ನೀವೇ ಸಾಕ್ಷಿಗಳು.</verse>
				<verse number="49">ನನ್ನ ಪಿತ ವಾಗ್ದಾನ ಮಾಡಿದ ವ್ಯಕ್ತಿಯನ್ನು ನಾನೇ ನಿಮಗೆ ಕಳುಹಿಸಿಕೊಡುವೆನು. ಸ್ವರ್ಗದಿಂದ ಬರುವ ಶಕ್ತಿಯಿಂದ ನೀವು ಭೂಷಿತರಾಗುವ ತನಕ ಈ ಪಟ್ಟಣದಲ್ಲೇ ಕಾದಿರಿ,” ಎಂದು ಹೇಳಿದರು.</verse>
				<verse number="50">ಕಟ್ಟಕಡೆಗೆ ಯೇಸುಸ್ವಾಮಿ ಶಿಷ್ಯರನ್ನು ಬೆಥಾನಿಯ ಎಂಬ ಊರಿನವರೆಗೆ ಕರೆದುಕೊಂಡು ಹೋದರು. ಅಲ್ಲಿ ತಮ್ಮ ಕರಗಳನ್ನೆತ್ತಿ ಆಶೀರ್ವದಿಸಿದರು.</verse>
				<verse number="51">ಆಶೀರ್ವದಿಸುತ್ತಿದ್ದ ಹಾಗೆಯೇ ಅವರನ್ನು ಬೀಳ್ಕೊಟ್ಟರು. (ಮತ್ತು ಸ್ವರ್ಗಕ್ಕೆ ಒಯ್ಯಲ್ಪಟ್ಟರು).</verse>
				<verse number="52">ಶಿಷ್ಯರು (ಅವರನ್ನು ಆರಾಧಿಸಿ) ಅತ್ಯಾನಂದದಿಂದ ಜೆರುಸಲೇಮಿಗೆ ಹಿಂದಿರುಗಿದರು.</verse>
				<verse number="53">ಮಹಾದೇವಾಲಯದಲ್ಲಿ ದೇವರನ್ನು ಸತತವಾಗಿ ಸ್ತುತಿಮಾಡಿಕೊಂಡಿದ್ದರು.</verse>
			</chapter>
		</book>
		<book number="43">
			<chapter number="1">
				<verse number="1">ಜಗತ್ತು ಉಂಟಾಗುವ ಮೊದಲೇ ‘ದಿವ್ಯವಾಣಿ’ ಎಂಬವರಿದ್ದರು. ಆ ದಿವ್ಯವಾಣಿ ದೇವರಾಗಿದ್ದರು. ಆ ದಿವ್ಯವಾಣಿ ದೇವರೊಂದಿಗೆ ಇದ್ದರು;</verse>
				<verse number="2">ಅನಾದಿಯಿಂದಲೇ ಅವರು ದೇವರೊಂದಿಗೆ ಇದ್ದರು.</verse>
				<verse number="3">ದಿವ್ಯವಾಣಿಯ ಮುಖಾಂತರವೇ ಸಮಸ್ತವೂ ಉಂಟಾಯಿತು. ಉಂಟಾದವುಗಳಲ್ಲಿ ಯಾವುದೂ ಆ ದಿವ್ಯವಾಣಿಯಿಂದಲ್ಲದೆ ಆದುದಿಲ್ಲ.</verse>
				<verse number="4">ಆ ದಿವ್ಯವಾಣಿಯಲ್ಲಿ ಸಜ್ಜೀವವಿತ್ತು. ಆ ಜೀವವೇ ಮಾನವಜನಾಂಗದ ಜ್ಯೋತಿಯಾಗಿತ್ತು.</verse>
				<verse number="5">ಆ ಜ್ಯೋತಿ ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲಿಗಾದರೋ ಅದನ್ನು ನಿಗ್ರಹಿಸಲಾಗಲಿಲ್ಲ.</verse>
				<verse number="6">ದೇವರು ಒಬ್ಬ ವ್ಯಕ್ತಿಯನ್ನು ಕಳುಹಿಸಿದರು. ಆತನ ಹೆಸರು ಯೊವಾನ್ನ.</verse>
				<verse number="7">ಈತನು ಸಾಕ್ಷಿಕೊಡಲು ಬಂದನು. ತನ್ನ ಮುಖಾಂತರ ಸರ್ವರೂ ವಿಶ್ವಾಸಿಸುವಂತೆ ಆ ಜ್ಯೋತಿಯನ್ನು ಕುರಿತು ಸಾಕ್ಷಿನೀಡಿದನು.</verse>
				<verse number="8">ಈತನೇ ಜ್ಯೋತಿಯಾಗಿರಲಿಲ್ಲ; ಆ ಜ್ಯೋತಿಯನ್ನು ಕುರಿತು ಸಾಕ್ಷಿ ನೀಡಲೆಂದೇ ಬಂದವನು.</verse>
				<verse number="9">ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಜ್ಯೋತಿ ಅವರೇ.</verse>
				<verse number="10">ದಿವ್ಯವಾಣಿ ಲೋಕದಲ್ಲಿ ಇದ್ದರು. ಅವರ ಮುಖಾಂತರವೇ ಲೋಕವು ಉಂಟಾಯಿತು. ಲೋಕವಾದರೋ ಅವರನ್ನು ಅರಿತುಕೊಳ್ಳದೆಹೋಯಿತು.</verse>
				<verse number="11">ಅವರು ತಮ್ಮ ಸ್ವದೇಶಕ್ಕೆ ಬಂದರು; ಸ್ವಜನರೇ ಅವರನ್ನು ಬರಮಾಡಿಕೊಳ್ಳದೆಹೋದರು.</verse>
				<verse number="12">ಕೆಲವರಾದರೋ ಅವರನ್ನು ಬರಮಾಡಿಕೊಂಡರು. ಅಂಥವರಿಗೆ, ಅಂದರೆ ಅವರಲ್ಲಿ ವಿಶ್ವಾಸ ಇಟ್ಟವರಿಗೆ, ದೇವರ ಮಕ್ಕಳಾಗುವ ಹಕ್ಕನ್ನು ಅವರು ಕೊಟ್ಟರು.</verse>
				<verse number="13">ಅಂಥವರ ಜನನವು ರಕ್ತಸಂಬಂಧದಿಂದ ಅಲ್ಲ, ಶಾರೀರಕ ಇಚ್ಛೆಯಿಂದ ಅಲ್ಲ. ಮಾನವ ಸಹಜ ಬಯಕೆಯಿಂದಲೂ ಅಲ್ಲ, ದೇವರಿಂದಲೇ ಆದುದು.</verse>
				<verse number="14">ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.</verse>
				<verse number="15">ಯೊವಾನ್ನನು ಅವರನ್ನು ಕುರಿತು ಸಾಕ್ಷಿ ನುಡಿಯುತ್ತಾ, “ ‘ಅವರು ನನ್ನ ಬಳಿಗೆ ಬಂದವರಾದರೂ ನನಗಿಂತ ಮೊದಲೇ ಇದ್ದವರು; ಆದುದರಿಂದ ಅವರು ನನಗಿಂತಲೂ ಶ್ರೇಷ್ಠರು’ ಎಂದು ನಾನು ಹೇಳಿದ್ದು ಅವರನ್ನು ಕುರಿತೇ,” ಎಂದು ಘೋಷಿಸಿದನು.</verse>
				<verse number="16">ಅವರ ಪರಿಪೂರ್ಣತೆಯಿಂದ ನಾವೆಲ್ಲರು ವರಪ್ರಸಾದದ ಮೇಲೆ ವರಪ್ರಸಾದವನ್ನು ಪಡೆದಿದ್ದೇವೆ.</verse>
				<verse number="17">ಧರ್ಮಶಾಸ್ತ್ರವನ್ನು ಮೋಶೆಯ ಮುಖಾಂತರ ಕೊಡಲಾಯಿತು. ವರಪ್ರಸಾದ ಹಾಗೂ ಸತ್ಯವಾದರೋ ಯೇಸು ಕ್ರಿಸ್ತರ ಮುಖಾಂತರ ಬಂದವು.</verse>
				<verse number="18">ಯಾರೂ ಎಂದೂ ದೇವರನ್ನು ಕಂಡಿಲ್ಲ; ಪಿತನ ವಕ್ಷಸ್ಥಲದಲ್ಲಿರುವ, ಸ್ವತಃ ದೇವರಾಗಿರುವ ಏಕೈಕ ಪುತ್ರನೇ ಅವರನ್ನು ತಿಳಿಯಪಡಿಸಿದ್ದಾರೆ.</verse>
				<verse number="19">ಜೆರುಸಲೇಮಿನ ಯೆಹೂದ್ಯ ಅಧಿಕಾರಿಗಳು, ಯಾಜಕರನ್ನೂ ಲೇವಿಯರನ್ನೂ ಯೊವಾನ್ನನ ಬಳಿಗೆ ಕಳಿಸಿದರು. ಇವರು, “ನೀನು ಯಾರು?” ಎಂದು ಪ್ರಶ್ನಿಸಿದರು.</verse>
				<verse number="20">ಯೊವಾನ್ನನು ಅದಕ್ಕೆ ಉತ್ತರವಾಗಿ, “ಅಭಿಷಿಕ್ತನಾದ ಲೋಕೋದ್ಧಾರಕ ನಾನಲ್ಲ,” ಎಂದು ಸ್ಪಷ್ಟವಾಗಿ ಹೇಳಿದನು. ಏನನ್ನೂ ಮರೆಮಾಚಲಿಲ್ಲ.</verse>
				<verse number="21">ಹಾಗಾದರೆ, “ನೀನು ಎಲೀಯನೋ?’ ಎಂದು ಕೇಳಲು ‘ಅಲ್ಲ’ ಎಂದನು. “ನೀನು ಬರಬೇಕಾಗಿದ್ದ ಪ್ರವಾದಿಯಿರಬಹುದೇ?’ ಎಂದು ಅವರು ಮತ್ತೆ ಕೇಳಲು, “ಅದೂ ಅಲ್ಲ” ಎಂದು ಮರುನುಡಿದನು.</verse>
				<verse number="22">“ಹಾಗಾದರೆ ನೀನು ಯಾರೆಂದು ನಮಗೆ ತಿಳಿಸು. ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರಕೊಡಬೇಕಾಗಿದೆ. ನಿನ್ನನ್ನು ಕುರಿತು ನೀನು ಏನು ಹೇಳುತ್ತೀ?’ ಎಂದು ಅವರು ಮತ್ತೊಮ್ಮೆ ಕೇಳಿದರು.</verse>
				<verse number="23">ಅದಕ್ಕೆ ಯೊವಾನ್ನನು, “ಪ್ರಭುವಿನ ಮಾರ್ಗವನ್ನು ನೇರಗೊಳಿಸಿರೆಂದು ಬೆಂಗಾಡಿನಲ್ಲಿ ಕೂಗುವವನ ಸ್ವರವೇ ನಾನು,” ಎಂದು ಯೆಶಾಯ ಪ್ರವಾದಿಯ ಮಾತುಗಳಲ್ಲೇ ಉತ್ತರಕೊಟ್ಟನು.</verse>
				<verse number="24">ಆಗ ಫರಿಸಾಯರ ಕಡೆಯಿಂದ ಬಂದಿದ್ದ ಕೆಲವರು, “ನೀನು ಲೋಕೋದ್ಧಾರಕನಾಗಲಿ, ಎಲೀಯನಾಗಲಿ, ಬರಬೇಕಾಗಿದ್ದ ಪ್ರವಾದಿಯೇ ಆಗಲಿ ಅಲ್ಲವೆಂದ ಮೇಲೆ ಸ್ನಾನದೀಕ್ಷೆ ಕೊಡುವುದೇಕೆ?” ಎಂದು ಪ್ರಶ್ನಿಸಿದರು.</verse>
				<verse number="25"></verse>
				<verse number="26">ಪ್ರತ್ಯುತ್ತರವಾಗಿ ಯೊವಾನ್ನನು, “ನಾನು ನಿಮಗೆ ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದೇನೆ. ನಿಮಗೆ ತಿಳಿಯದ ಒಬ್ಬ ವ್ಯಕ್ತಿ ನಿಮ್ಮ ನಡುವೆ ಇದ್ದಾರೆ.</verse>
				<verse number="27">ನನ್ನ ಬಳಿಕ ಬರಬೇಕಾಗಿದ್ದವರು ಅವರೇ. ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,” ಎಂದನು.</verse>
				<verse number="28">ಯೋವಾನ್ನನು ಸ್ನಾನದೀಕ್ಷೆ ಕೊಡುತ್ತಿದ್ದ ಜೋರ್ಡನ್ ನದಿಯ ಆಚೆದಡದಲ್ಲಿದ್ದ ಬೆಥಾನಿಯ ಎಂಬಲ್ಲಿ ಇದೆಲ್ಲವೂ ನಡೆಯಿತು.</verse>
				<verse number="29">ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.</verse>
				<verse number="30">ಇವರು ‘ನನ್ನ ಬಳಿಕ ಬಂದವರಾದರೂ ನನಗಿಂತಲೂ ಮೊದಲೇ ಇದ್ದವರು; ಆದುದರಿಂದ ಇವರು ನನಗಿಂತಲೂ ಶ್ರೇಷ್ಠರು,’ ಎಂದು ನಾನು ಹೇಳಿದುದು ಇವರನ್ನು ಕುರಿತೇ.</verse>
				<verse number="31">ಇಸ್ರಯೇಲರಿಗೆ ಇವರನ್ನು ತೋರ್ಪಡಿಸಬೇಕೆಂದೇ ನಾನು ನೀರಿನಿಂದ ಸ್ನಾನದೀಕ್ಷೆಕೊಡುತ್ತಾ ಬಂದೆನು; ಬರಬೇಕಾಗಿದ್ದವರು ಇವರೇ ಎಂದು ನನಗೂ ತಿಳಿದಿರಲಿಲ್ಲ,” ಎಂದು ನುಡಿದನು.</verse>
				<verse number="32">ಯೊವಾನ್ನನು ತನ್ನ ಸಾಕ್ಷ್ಯವನ್ನು ಮುಂದುವರಿಸುತ್ತಾ, “ಪಾರಿವಾಳದ ರೂಪದಲ್ಲಿ ಪವಿತ್ರಾತ್ಮ ಸ್ವರ್ಗದಿಂದ ಇಳಿದುಬಂದು ಅವರ ಮೇಲೆ ನೆಲಸುವುದನ್ನು ನಾನು ನೋಡಿದೆನು.</verse>
				<verse number="33">ಬರಬೇಕಾಗಿದ್ದವರು ಇವರೇ ಎಂದು ನನಗೂ ತಿಳಿದಿರಲಿಲ್ಲ. ಆದರೆ ನೀರಿನಿಂದ ಸ್ನಾನದೀಕ್ಷೆಕೊಡುವಂತೆ ನನ್ನನ್ನು ಕಳುಹಿಸಿದ ದೇವರು, ‘ಪವಿತ್ರಾತ್ಮ ಇಳಿದುಬಂದು ಯಾವ ವ್ಯಕ್ತಿಯ ಮೇಲೆ ನೆಲಸುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತ,’ ಎಂದಿದ್ದರು.</verse>
				<verse number="34">ಅದನ್ನು ನಾನು ಕಣ್ಣಾರೆ ನೋಡಿದ್ದೇನೆ. ಆದುದರಿಂದ ಅವರೇ ದೇವರ ಪುತ್ರನೆಂದು ಸಾಕ್ಷಿ ನೀಡುತ್ತಿದ್ದೇನೆ,” ಎಂದು ಹೇಳಿದನು.</verse>
				<verse number="35">ಮಾರನೆಯ ದಿನ ಯೊವಾನ್ನನು ತನ್ನಿಬ್ಬರು ಶಿಷ್ಯರ ಸಂಗಡ ನಿಂತುಕೊಂಡಿರುವಾಗ, ಯೇಸು ಸ್ವಾಮಿ ಆ ಮಾರ್ಗವಾಗಿ ಹೋಗುತ್ತಿದ್ದರು.</verse>
				<verse number="36">ಅವರನ್ನು ನೋಡುತ್ತಲೇ ಯೊವಾನ್ನನು ತನ್ನ ಆ ಶಿಷ್ಯರಿಗೆ, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ,” ಎಂದು ಹೇಳಿದನು.</verse>
				<verse number="37">ಇದನ್ನು ಕೇಳಿದ ಆ ಶಿಷ್ಯರು ಯೇಸುವನ್ನು ಹಿಂಬಾಲಿಸಿದರು.</verse>
				<verse number="38">ಯೇಸು ಸ್ವಾಮಿ, ತಮ್ಮನ್ನು ಹಿಂಬಾಲಿಸಿ ಬರುತ್ತಿರುವುದನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಿದರು. ಅವರು, “ರಬ್ಬೀ, ತಾವು ವಾಸಮಾಡುವುದೆಲ್ಲಿ?” ಎಂದು ವಿಚಾರಿಸಿದರು. (’ರಬ್ಬಿ’ ಎಂದರೆ ಗುರುದೇವ ಎಂದು ಅರ್ಥ.)</verse>
				<verse number="39">ಯೇಸು ಉತ್ತರವಾಗಿ, “ಬಂದು ನೋಡಿ” ಎನ್ನಲು ಅವರು ಹೋಗಿ ಯೇಸು ಸ್ವಾಮಿ ಇದ್ದ ಸ್ಥಳವನ್ನು ಕಂಡು ಆ ದಿನವನ್ನು ಅವರೊಡನೆ ಕಳೆದರು. ಆಗ ಸಾಯಂಕಾಲ ಸುಮಾರು ನಾಲ್ಕು ಗಂಟೆಯಾಗಿತ್ತು.</verse>
				<verse number="40">ಯೊವಾನ್ನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ್ದ ಇಬ್ಬರು ಶಿಷ್ಯರಲ್ಲಿ ಸಿಮೋನ ಪೇತ್ರನ ಸಹೋದರನಾದ ಅಂದ್ರೆಯನು ಒಬ್ಬನು.</verse>
				<verse number="41">ಇವನು ಮೊದಲು ತನ್ನ ಸಹೋದರ ಸಿಮೋನನನ್ನು ಕಂಡು, “ನಮಗೆ ‘ಮೆಸ್ಸೀಯ’ ಸಿಕ್ಕಿದ್ದಾರೆ,” ಎಂದು ತಿಳಿಸಿ</verse>
				<verse number="42">ಅವನನ್ನು ಯೇಸುವಿನ ಬಳಿಗೆ ಕರತಂದನು. (’ಮೆಸ್ಸೀಯ’ ಎಂದರೆ ಅಭಿಷಿಕ್ತನಾದ ಲೋಕೋದ್ಧಾರಕ ಎಂದು ಅರ್ಥ). ಯೇಸು ಸಿಮೋನನನ್ನು ನೋಡಿ, “ಯೊವಾನ್ನನ ಮಗನಾದ ಸಿಮೋನನೇ, ಇನ್ನು ಮುಂದೆ ನಿನ್ನನ್ನು ಕೇಫನೆಂದು ಕರೆಯುವರು,” ಎಂದು ನುಡಿದರು. (’ಕೇಫ’ ಎಂದರೆ ‘ಪೇತ್ರ’ ಇಲ್ಲವೇ ‘ಬಂಡೆ’ ಎಂದರ್ಥ).</verse>
				<verse number="43">ಮರುದಿನ ಯೇಸು ಸ್ವಾಮಿ ಗಲಿಲಾಯ ನಾಡಿಗೆ ಹೋಗಲು ನಿರ್ಧರಿಸಿದರು. ಅವರು ಫಿಲಿಪ್ಪನನ್ನು ಕಂಡು, “ನನ್ನೊಡನೆ ಬಾ,” ಎಂದು ಕರೆದರು.</verse>
				<verse number="44">ಅಂದ್ರೆಯ ಮತ್ತು ಪೇತ್ರನಂತೆ ಫಿಲಿಪ್ಪನು ಕೂಡ ಬೆತ್ಸಾಯಿದ ಎಂಬ ಊರಿನವನು.</verse>
				<verse number="45">ಫಿಲಿಪ್ಪನು ನತಾನಿಯೇಲನನ್ನು ಕಂಡು, “ಧರ್ಮಶಾಸ್ತ್ರದಲ್ಲಿ ಮೋಶೆ ಉಲ್ಲೇಖಿಸಿದ ಮತ್ತು ಪ್ರವಾದಿಗಳು ಪ್ರವಚನ ಮಾಡಿದ ವ್ಯಕ್ತಿಯು ನಮಗೆ ಸಿಕ್ಕಿದ್ದಾರೆ. ಇವರೇ ಜೋಸೆಫನ ಮಗನಾದ ನಜರೇತ್ ಊರಿನ ಯೇಸು,” ಎಂದು ಹೇಳಿದನು.</verse>
				<verse number="46">ಅದಕ್ಕೆ ನತಾನಿಯೇಲನು, “ಏನು? ನಜರೇತಿನಿಂದ ಒಳ್ಳೆಯದೇನಾದರೂ ಬರುವುದು ಉಂಟೆ?” ಎಂದು ಕೇಳಲು, “ಬಂದು ನೀನೇ ನೋಡು,” ಎಂದು ಫಿಲಿಪ್ಪನು ಉತ್ತರಕೊಟ್ಟನು.</verse>
				<verse number="47">ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.</verse>
				<verse number="48">ನತಾನಿಯೇಲನು, “ನನ್ನ ಪರಿಚಯ ನಿಮಗೆ ಹೇಗಾಯಿತು?” ಎಂದು ಕೇಳಲು ಯೇಸು, “ಫಿಲಿಪ್ಪನು ನಿನ್ನನ್ನು ಕರೆಯುವ ಮೊದಲೇ ನೀನು ಅಂಜೂರದ ಮರದಡಿ ಇದ್ದಾಗ ನಾನು ನಿನ್ನನ್ನು ಕಂಡೆ,” ಎಂದು ಉತ್ತರಕೊಟ್ಟರು.</verse>
				<verse number="49">ಅದಕ್ಕೆ ನತಾನಿಯೇಲನು, “ಗುರುದೇವಾ’ ದೇವರ ಪುತ್ರ ನೀವೇ; ಇಸ್ರಯೇಲರ ಅರಸ ನೀವೇ,” ಎಂದನು.</verse>
				<verse number="50">ಆಗ ಯೇಸು, “ಅಂಜೂರದ ಮರದಡಿಯಲ್ಲಿ ನಿನ್ನನ್ನು ಕಂಡೆ ಎಂದು ನಾನು ಹೇಳಿದ ಮಾತ್ರಕ್ಕೆ ಇಷ್ಟೊಂದು ವಿಶ್ವಾಸವೆ? ಇದಕ್ಕೂ ಮಿಗಿಲಾದವುಗಳನ್ನು ನೀನು ಕಾಣುವೆ,” ಎಂದು ನುಡಿದರು.</verse>
				<verse number="51">ತಮ್ಮ ಮಾತನ್ನು ಮುಂದುವರೆಸುತ್ತಾ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಸ್ವರ್ಗವು ತೆರೆದಿರುವುದನ್ನೂ ನರಪುತ್ರನ ಮುಖಾಂತರ ದೇವದೂತರು ಏರುವುದನ್ನೂ ಇಳಿಯುವುದನ್ನೂ ನೀವು ಕಾಣುವಿರಿ,” ಎಂದು ಹೇಳಿದರು.</verse>
			</chapter>
			<chapter number="2">
				<verse number="1">ಮಾರನೆಯ ದಿನ ಗಲಿಲೇಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು.</verse>
				<verse number="2">ಯೇಸು ಸ್ವಾಮಿಯ ತಾಯಿ ಅಲ್ಲಿಗೆ ಬಂದಿದ್ದರು. ಯೇಸುವಿಗೂ ಅವರ ಶಿಷ್ಯರಿಗೂ ಆ ಮದುವೆಗೆ ಆಮಂತ್ರಣವಿತ್ತು.</verse>
				<verse number="3">ಆ ಸಂದರ್ಭದಲ್ಲಿ ದ್ರಾಕ್ಷಾರಸ ಸಾಲದೆಹೋಯಿತು. ಆಗ ಯೇಸುವಿನ ತಾಯಿ, “ಅವರಲ್ಲಿ ದ್ರಾಕ್ಷಾರಸ ಮುಗಿದುಹೋಗಿದೆ,” ಎಂದು ಯೇಸುವಿಗೆ ಹೇಳಿದರು.</verse>
				<verse number="4">ಅದಕ್ಕೆ ಯೇಸು, “ಅಮ್ಮಾ, ಇದನ್ನು ನನಗೇಕೆ ಹೇಳುತ್ತೀ? ನನ್ನ ಗಳಿಗೆ ಇನ್ನೂ ಬಂದಿಲ್ಲ,” ಎಂದು ಉತ್ತರಕೊಟ್ಟರು.</verse>
				<verse number="5">ತಾಯಿ ಸೇವಕರಿಗೆ, “ಆತ ಹೇಳಿದಂತೆ ಮಾಡಿ,” ಎಂದು ತಿಳಿಸಿದರು.</verse>
				<verse number="6">ಯೆಹೂದ್ಯರ ಶುದ್ಧಾಚಾರ ಪದ್ಧತಿಯಂತೆ ಆರು ಕಲ್ಲುಬಾನೆಗಳನ್ನು ಅಲ್ಲಿ ಇಟ್ಟಿದ್ದರು. ಅವು ಒಂದೊಂದೂ ಎರಡು ಮೂರು ಕೊಡ ನೀರು ಹಿಡಿಯುವಷ್ಟು ದೊಡ್ಡದಾಗಿದ್ದವು.</verse>
				<verse number="7">ಯೇಸು ಸ್ವಾಮಿ ಸೇವಕರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ,” ಎಂದು ಹೇಳಿದರು. ಅವರು ಕಂಠದವರೆಗೆ ತುಂಬಿದರು.</verse>
				<verse number="8">ಯೇಸು, “ಈಗ ತೋಡಿಕೊಂಡು ಹೋಗಿ ಔತಣದ ಮೇಲ್ವಿಚಾರಕನಿಗೆ ಕೊಡಿ,” ಎಂದು ಹೇಳಲು ಅವರು ಹಾಗೆಯೇ ಮಾಡಿದರು.</verse>
				<verse number="9">ಮೇಲ್ವಿಚಾರಕನು ದ್ರಾಕ್ಷಾರಸವಾಗಿ ಮಾರ್ಪಟ್ಟಿದ್ದ ನೀರಿನ ರುಚಿ ನೋಡಿದನು. ಅದು ಎಲ್ಲಿಂದ ಬಂದಿತೆಂಬುದು ಅವನಿಗೆ ತಿಳಿದಿರಲಿಲ್ಲ. ನೀರನ್ನು ತೋಡಿಕೊಂಡು ಬಂದ ಸೇವಕರಿಗೆ ಮಾತ್ರ ತಿಳಿದಿತ್ತು.</verse>
				<verse number="10">ಆದುದರಿಂದ ಅವನು ಮದುಮಗನನ್ನು ಕರೆದು, “ಜನರೆಲ್ಲರೂ ಉತ್ತಮವಾದ ದ್ರಾಕ್ಷಾರಸವನ್ನು ಮೊದಲು ಹಂಚುತ್ತಾರೆ; ಅತಿಥಿಗಳು ಯಥೇಚ್ಛವಾಗಿ ಕುಡಿದಾದ ಮೇಲೆ ಸಾಧಾರಣ ದ್ರಾಕ್ಷಾರಸವನ್ನು ಕೊಡುತ್ತಾರೆ. ನೀನಾದರೋ ಉತ್ತಮವಾದುದನ್ನು ಈವರೆಗೂ ಇಟ್ಟಿದ್ದೀಯಲ್ಲಾ!” ಎಂದು ಹೇಳಿದನು.</verse>
				<verse number="11">ಯೇಸು ಮಾಡಿದ ಮೊದಲನೆಯ ಸೂಚಕಕಾರ್ಯ ಇದು. ಇದನ್ನು ಗಲಿಲೇಯ ನಾಡಿನ ಕಾನಾ ಊರಿನಲ್ಲಿ ಮಾಡಿ ತಮ್ಮ ಮಹಿಮೆಯನ್ನು ತೋರ್ಪಡಿಸಿದರು. ಅವರ ಶಿಷ್ಯರಿಗೂ ಅವರಲ್ಲಿ ವಿಶ್ವಾಸ ಮೂಡಿತು.</verse>
				<verse number="12">ಇದಾದ ಮೇಲೆ ಯೇಸು, ಅವರ ತಾಯಿ, ಸಹೋದರರು ಮತ್ತು ಶಿಷ್ಯರು ಕಪೆರ್ನವುಮಿಗೆ ಹೋಗಿ ಅಲ್ಲಿ ಕೆಲವು ದಿನ ತಂಗಿದ್ದರು.</verse>
				<verse number="13">ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿದ್ದುದರಿಂದ ಯೇಸು ಸ್ವಾಮಿ ಜೆರುಸಲೇಮಿಗೆ ತೆರಳಿದರು.</verse>
				<verse number="14">ಅಲ್ಲಿಯ ಮಹಾದೇವಾಲಯದಲ್ಲಿ ದನ, ಕುರಿ ಮತ್ತು ಪಾರಿವಾಳಗಳನ್ನು ಮಾರುವವರು ಮತ್ತು ನಾಣ್ಯ ವಿನಿಮಯ ಮಾಡುವವರು ವ್ಯಾಪಾರಕ್ಕೆ ಕುಳಿತಿದ್ದರು.</verse>
				<verse number="15">ಅದನ್ನು ಕಂಡ ಯೇಸು, ಹಗ್ಗವನ್ನು ಚಾವಟಿಯಂತೆ ಹೆಣೆದು ಅದರಿಂದ ಅವರನ್ನೆಲ್ಲಾ ದೇವಾಲಯದಿಂದ ಹೊರಗಟ್ಟಿದರು. ದನಕುರಿಗಳನ್ನು ಓಡಿಸಿದರು. ನಾಣ್ಯ ವಿನಿಮಯ ಮಾಡುವವರ ಮೇಜುಗಳನ್ನು ಕೆಡವಿ, ಚಿಲ್ಲರೆ ಹಣವನ್ನು ಚೆಲ್ಲಿದರು.</verse>
				<verse number="16">ಪಾರಿವಾಳಗಳನ್ನು ಮಾರುತ್ತಿದ್ದವರಿಗೆ, “ಇವನ್ನು ಇಲ್ಲಿಂದ ತೆಗೆದುಕೊಂಡು ಹೊರಡಿ. ನನ್ನ ಪಿತನ ಆಲಯವನ್ನು ಸಂತೆಯನ್ನಾಗಿ ಮಾಡಬೇಡಿ,” ಎಂದು ಹೇಳಿದರು.</verse>
				<verse number="17">‘ನಿನ್ನ ಆಲಯದ ಮೇಲಿನ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,’ ಎಂದು ಪವಿತ್ರಗ್ರಂಥದಲ್ಲೇ ಬರೆದಿರುವ ವಾಕ್ಯವು ಶಿಷ್ಯರಿಗೆ ಆಗ ನೆನಪಾಯಿತು.</verse>
				<verse number="18">ಯೆಹೂದ್ಯರು, “ಇಷ್ಟೆಲ್ಲಾ ಮಾಡಲು ನಿನಗೆ ಅಧಿಕಾರವಿದೆ ಎಂದು ರುಜುವಾತು ಪಡಿಸುವುದಕ್ಕೆ ಯಾವ ಪವಾಡವನ್ನು ಮಾಡಿತೋರಿಸಬಲ್ಲೆ?” ಎಂದು ಯೇಸುವನ್ನು ಪ್ರಶ್ನಿಸಿದರು.</verse>
				<verse number="19">ಅದಕ್ಕೆ ಯೇಸು, ‘ಈ ದೇವಾಲಯವನ್ನು ಕೆಡವಿಬಿಡಿ, ಮೂರು ದಿನದಲ್ಲಿ ಅದನ್ನು ಪುನಃ ಎಬ್ಬಿಸುವೆನು,” ಎಂದು ಉತ್ತರಕೊಟ್ಟರು.</verse>
				<verse number="20">ಚಕಿತರಾದ ಯೆಹೂದ್ಯರು, “ಈ ದೇವಾಲಯವನ್ನು ಕಟ್ಟಲು ನಲವತ್ತಾರು ವರ್ಷಗಳು ಹಿಡಿದಿವೆ. ನೀನು ಮೂರು ದಿನಗಳಲ್ಲೇ ಅದನ್ನು ಎಬ್ಬಿಸಬಲ್ಲೆಯಾ?” ಎಂದು ಕೇಳಿದರು.</verse>
				<verse number="21">ಯೇಸು ಹೇಳಿದ್ದು ತಮ್ಮ ದೇಹವೆಂಬ ದೇಗುಲವನ್ನು ಕುರಿತು.</verse>
				<verse number="22">ಅವರು ಸತ್ತು ಪುನರುತ್ಥಾನ ಹೊಂದಿದ ಬಳಿಕ ಶಿಷ್ಯರು ಅವರ ಈ ಮಾತುಗಳನ್ನು ಸ್ಮರಿಸಿಕೊಂಡರು. ಪವಿತ್ರಗ್ರಂಥದಲ್ಲೂ ಯೇಸುವಿನ ಮಾತಿನಲ್ಲೂ ಅವರಿಗೆ ಆಗ ವಿಶ್ವಾಸ ಹುಟ್ಟಿತು.</verse>
				<verse number="23">ಯೇಸು ಸ್ವಾಮಿ ಪಾಸ್ಕಹಬ್ಬಕ್ಕಾಗಿ ಜೆರುಸಲೇಮಿನಲ್ಲಿದ್ದಾಗ ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅನೇಕರು ಅವರನ್ನು ನಂಬಿದರು.</verse>
				<verse number="24">ಆದರೆ ಯೇಸು ಎಲ್ಲರನ್ನು ಚೆನ್ನಾಗಿ ಬಲ್ಲವರಾದ್ದರಿಂದ ಅವರ ಈ ನಂಬಿಕೆಗೆ ಮಾರುಹೋಗಲಿಲ್ಲ.</verse>
				<verse number="25">ಜನರನ್ನು ಕುರಿತು ಯಾರೂ ಅವರಿಗೆ ತಿಳಿಸಬೇಕಾದ ಪ್ರಮೇಯವಿರಲಿಲ್ಲ. ಮಾನವನ ಅಂತರಂಗ ಅವರಿಗೆ ಬಹಿರಂಗವಾಗಿತ್ತು.</verse>
			</chapter>
			<chapter number="3">
				<verse number="1">ಅಲ್ಲಿ ನಿಕೊದೇಮನೆಂಬ ಫರಿಸಾಯನು ಇದ್ದನು.</verse>
				<verse number="2">ಅವನು ಯೆಹೂದ್ಯರ ನಾಯಕರಲ್ಲಿ ಒಬ್ಬನು. ಒಂದು ರಾತ್ರಿ ಅವನು ಯೇಸು ಸ್ವಾಮಿಯ ಬಳಿಗೆ ಬಂದು, “ಗುರುದೇವಾ, ತಾವು ದೇವರಿಂದ ಬಂದ ಬೋಧಕರೆಂದು ನಾವು ಬಲ್ಲೆವು. ದೇವರು ತನ್ನೊಡನೆ ಇಲ್ಲದ ಹೊರತು ಯಾರಿಂದಲೂ ತಾವು ಮಾಡುವ ಸೂಚಕಕಾರ್ಯಗಳನ್ನು ಮಾಡಲು ಆಗದು,” ಎಂದು ಹೇಳಿದನು.</verse>
				<verse number="3">ಆಗ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ಸಾಮ್ರಾಜ್ಯವನ್ನು ಸೇರಲಾರ,” ಎಂದು ಹೇಳಿದರು.</verse>
				<verse number="4">ಅದಕ್ಕೆ ನಿಕೊದೇಮನು, “ವಯಸ್ಸಾದ ಒಬ್ಬನು ಹೊಸದಾಗಿ ಹುಟ್ಟುವುದಾದರೂ ಹೇಗೆ? ತಾಯಿಯ ಗರ್ಭವನ್ನು ಮತ್ತೊಮ್ಮೆ ಹೊಕ್ಕು ಅವನು ಹುಟ್ಟಲು ಸಾಧ್ಯವೇ?” ಎಂದು ಕೇಳಿದನು.</verse>
				<verse number="5">ಅದ್ಕಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ: ನೀರಿನಿಂದಲೂ ಪವಿತ್ರಾತ್ಮನಿಂದಲೂ ಹುಟ್ಟಿದ ಹೊರತು ಯಾವನೂ ದೇವರ ರಾಜ್ಯವನ್ನು ಪ್ರವೇಶಿಸಲಾರನು.</verse>
				<verse number="6">ಶರೀರದಿಂದ ಹುಟ್ಟಿದ್ದು ಶರೀರಮಯ, ದೇವರಿಂದ ಹುಟ್ಟಿದ್ದು ದೈವಮಯ.</verse>
				<verse number="7">ನೀವು ಹೊಸ ಜನ್ಮ ಪಡೆಯಬೇಕೆಂದು ನಾನು ಹೇಳಿದ್ದನ್ನು ಕೇಳಿ ಬೆರಗಾಗಬೇಕಿಲ್ಲ.</verse>
				<verse number="8">ಗಾಳಿ ತನಗೆ ತೋಚಿದ ಕಡೆ ಬೀಸುತ್ತದೆ, ಅದರ ಸದ್ದು ನಿನಗೆ ಕೇಳಿಸುತ್ತದೆ; ಆದರೆ ಅದು ಎಲ್ಲಿಂದ ಬರುತ್ತದೆ, ಎಲ್ಲಿಗೆ ಹೋಗುತ್ತದೆ ಎಂಬುದು ನಿನಗೆ ತಿಳಿಯದು. ದೇವರ ಆತ್ಮದಿಂದ ಹುಟ್ಟಿದ ಪ್ರತಿಯೊಬ್ಬನೂ ಅದರಂತೆಯೇ,” ಎಂದು ಹೇಳಿದರು.</verse>
				<verse number="9">ಅದಕ್ಕೆ ನಿಕೊದೇಮನು, “ಇದೆಲ್ಲಾ ಹೇಗೆ ಸಾಧ್ಯ?” ಎಂದು ಕೇಳಿದನು.</verse>
				<verse number="10">ಆಗ ಯೇಸು, “ಇಸ್ರಯೇಲಿನ ಹೆಸರಾಂತ ಬೋಧಕನಾದ ನಿನಗೇ ಇದು ಅರ್ಥವಾಗಲಿಲ್ಲವೇ?</verse>
				<verse number="11">ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ ಕೇಳು: ನಮಗೆ ತಿಳಿದುದನ್ನೇ ಕುರಿತು ನಾವು ಮಾತನಾಡುತ್ತೇವೆ, ನಾವು ಕಂಡದ್ದನ್ನು ಕುರಿತು ಸಾಕ್ಷಿ ನೀಡುತ್ತೇವೆ. ಆದರೂ ನಮ್ಮ ಸಾಕ್ಷ್ಯವನ್ನು ನೀವು ಒಪ್ಪಿಕೊಳ್ಳಲು ಸಿದ್ಧರಿಲ್ಲ.</verse>
				<verse number="12">ಭೂಲೋಕದ ವಿಷಯವನ್ನು ಕುರಿತು ನಾನು ಮಾತನಾಡಿದಾಗಲೇ ನಿಮಗೆ ವಿಶ್ವಾಸವಿಲ್ಲವೆಂದ ಮೇಲೆ, ಸ್ವರ್ಗಲೋಕದ ವಿಷಯವನ್ನು ಕುರಿತು ನಾನು ಮಾತನಾಡಿದಲ್ಲಿ ನೀವು ವಿಶ್ವಾಸಿಸುವುದು ಉಂಟೆ?</verse>
				<verse number="13">ಸ್ವರ್ಗಲೋಕದಿಂದಲೇ ಇಳಿದುಬಂದ ನರಪುತ್ರನೇ ಹೊರತು ಬೇರೆ ಯಾರೂ ಸ್ವರ್ಗಕ್ಕೆ ಏರಿಹೋದವರಿಲ್ಲ.</verse>
				<verse number="14">ಮೋಶೆ ಮರುಭೂಮಿಯಲ್ಲಿ ಸರ್ಪವನ್ನು ಮೇಲಕ್ಕೆ ಏರಿಸಿದನು.</verse>
				<verse number="15">ಅಂತೆಯೇ ನರಪುತ್ರನಲ್ಲಿ ವಿಶ್ವಾಸವಿಟ್ಟವರೆಲ್ಲರೂ ನಿತ್ಯಜೀವವನ್ನು ಪಡೆಯುವಂತೆ ನರಪುತ್ರನನ್ನು ಸಹ ಮೇಲಕ್ಕೆ ಏರಿಸಬೇಕು.</verse>
				<verse number="16">ದೇವರು ಲೋಕವನ್ನು ಎಷ್ಟಾಗಿ ಪ್ರೀತಿಸಿದರೆಂದರೆ ತಮ್ಮ ಏಕೈಕ ಪುತ್ರನನ್ನೇ ಧಾರೆಯೆರೆದರು; ಆತನಲ್ಲಿ ವಿಶ್ವಾಸವಿಟ್ಟ ಯಾರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ದೇವರ ಉದ್ದೇಶ.</verse>
				<verse number="17">ದೇವರು ತಮ್ಮ ಪುತ್ರನನ್ನು ಈ ಲೋಕಕ್ಕೆ ಕಳುಹಿಸಿದ್ದು ಲೋಕವನ್ನು ತೀರ್ಪಿಗೆ ಗುರಿಮಾಡಲೆಂದಲ್ಲ; ಪುತ್ರನ ಮುಖಾಂತರ ಲೋಕ ಉದ್ಧಾರವಾಗಲೆಂದು.</verse>
				<verse number="18">ಪುತ್ರನಲ್ಲಿ ವಿಶ್ವಾಸವಿಟ್ಟವನಿಗೆ ತೀರ್ಪಿಲ್ಲ. ಆತನಲ್ಲಿ ವಿಶ್ವಾಸವಿಡದವನಾದರೋ ಈಗಾಗಲೇ ತೀರ್ಪಿಗೆ ಗುರಿಯಾಗಿದ್ದಾನೆ. ಏಕೆಂದರೆ, ಅವನಿಗೆ ದೇವರ ಏಕೈಕ ಪುತ್ರನಲ್ಲಿ ವಿಶ್ವಾಸವಿಲ್ಲ.</verse>
				<verse number="19">ಆ ತೀರ್ಪು ಏನೆಂದರೆ: ಜ್ಯೋತಿ ಜಗತ್ತಿಗೆ ಬಂದಿತು: ಮಾನವರಾದರೋ ತಮ್ಮ ದುಷ್ಕೃತ್ಯಗಳಿಂದಾಗಿ ಆ ಜ್ಯೋತಿಗೆ ಬದಲು ಅಂಧಕಾರವನ್ನೇ ಅವಲಂಭಿಸಿದರು.</verse>
				<verse number="20">ಕೇಡನ್ನು ಮಾಡುವವನಿಗೆ ಬೆಳಕೆಂದರೆ ಆಗದು. ತನ್ನ ದುಷ್ಕೃತ್ಯಗಳು ಬಯಲಾಗಬಾರದೆಂದು ಅವನು ಬೆಳಕಿನ ಬಳಿಗೆ ಸುಳಿಯುವುದೂ ಇಲ್ಲ.</verse>
				<verse number="21">ಸತ್ಯಸಂಧನಾದರೋ ಬೆಳಕಿನ ಬಳಿಗೆ ಬರುತ್ತಾನೆ. ತಾನು ಮಾಡುವುದು ದೇವರು ಮೆಚ್ಚುವುದನ್ನೇ ಎಂಬುದನ್ನು ತೋರ್ಪಡಿಸುತ್ತಾನೆ.</verse>
				<verse number="22">ಇದಾದ ಬಳಿಕ ಯೇಸು ಸ್ವಾಮಿ ತಮ್ಮ ಶಿಷ್ಯರೊಡನೆ ಜುದೇಯ ಪ್ರಾಂತ್ಯಕ್ಕೆ ಬಂದು ಅವರೊಡನೆ ಕೆಲವು ಕಾಲ ಅಲ್ಲೇ ಉಳಿದುಕೊಂಡು ದೀಕ್ಷಾಸ್ನಾನ ಮಾಡಿಸತೊಡಗಿದರು.</verse>
				<verse number="23">ಅತ್ತ ಯೊವಾನ್ನನು ಕೂಡ ಸಾಲಿಮ್ ಎಂಬ ಊರಿಗೆ ಹತ್ತಿರವಾಗಿದ್ದ ಐನೋನ್ ಎಂಬ ಸ್ಥಳದಲ್ಲಿ ನೀರು ಹೆಚ್ಚಾಗಿದ್ದುದರಿಂದ ಸ್ನಾನದೀಕ್ಷೆಯನ್ನು ಮಾಡಿಸುತ್ತಿದ್ದನು. ಜನರು ಬಂದು ಸ್ನಾನದೀಕ್ಷೆಯನ್ನು ಪಡೆಯುತ್ತಿದ್ದರು.</verse>
				<verse number="24">ಯೊವಾನ್ನನು ಆಗ ಇನ್ನೂ ಬಂಧಿತನಾಗಿರಲಿಲ್ಲ.</verse>
				<verse number="25">ಶುದ್ಧಾಚಾರವನ್ನು ಕುರಿತು ಯೊವಾನ್ನನ ಶಿಷ್ಯರಿಗೂ ಯೆಹೂದ್ಯನೊಬ್ಬನಿಗೂ ವಿವಾದ ಎದ್ದಿತು.</verse>
				<verse number="26">ಅವರು ಯೊವಾನ್ನನ ಬಳಿಗೆ ಬಂದು, “ಗುರುವೇ, ಜೋರ್ಡನಿನ ಆಚೆಕಡೆಯಲ್ಲಿ ನಿಮ್ಮೊಡನೆ ಒಬ್ಬನು ಇದ್ದನಲ್ಲವೆ? ಆತನನ್ನು ಕುರಿತು ನೀವೇ ಸಾಕ್ಷಿ ಹೇಳಲಿಲ್ಲವೆ? ಈಗ ನೋಡಿ, ಆತನೇ ದೀಕ್ಷಾಸ್ನಾನ ಮಾಡಿಸುತ್ತಿದ್ದಾನೆ. ಎಲ್ಲರೂ ಆತನ ಬಳಿಗೆ ಹೊಗುತ್ತಿದ್ದಾರೆ,” ಎಂದು ದೂರಿತ್ತರು.</verse>
				<verse number="27">ಅದಕ್ಕೆ ಯೊವಾನ್ನನು, “ದೇವರು ದಯಪಾಲಿಸದೆ ಹೋದರೆ ಮಾನವನಿಗೇನೂ ದಕ್ಕದು.</verse>
				<verse number="28">‘ನಾನು ಲೋಕೋದ್ಧಾರಕನಲ್ಲ: ಆತನ ಮುಂದೂತ ಮಾತ್ರ’ ಎಂದು ನಾನು ಹೇಳಿದ್ದಕ್ಕೆ ನೀವೇ ಸಾಕ್ಷಿಗಳಾಗಿದ್ದೀರಿ.</verse>
				<verse number="29">ಮದುಮಗಳು ಮದುಮಗನಿಗೆ ಸೇರಿದವಳು. ಮದುಮಗನ ಗೆಳೆಯನಾದರೋ ಪಕ್ಕದಲ್ಲಿದ್ದು ಮದುಮಗನ ಕರೆಗೆ ಕಿವಿಗೊಡುತ್ತಾನೆ; ಆತನ ಸ್ವರ ಕೇಳಿ ಹರ್ಷಿಸುತ್ತಾನೆ. ಇಂಥ ಆನಂದದಿಂದ ನಾನೀಗ ಭರಿತನಾಗಿದ್ದೇನೆ.</verse>
				<verse number="30">ಆತ ಬೆಳೆಯುತ್ತಿರಬೇಕು, ನಾನು ಅಳಿಯುತ್ತಿರಬೇಕು.</verse>
				<verse number="31">ಮೇಲಿಂದ ಬಂದವನೇ ಎಲ್ಲರಿಗಿಂತ ಮೇಲಾದವನು. ಇಹಲೋಕದಿಂದ ಬಂದವನು ಆದರೋ ಈ ಲೋಕಕ್ಕೆ ಸೇರಿದವನು; ಅವನು ಲೌಕಿಕವಾದುದನ್ನೇ ಹೇಳುವವನು. ಸ್ವರ್ಗದಿಂದ ಬಂದವನಾದರೋ ಸರ್ವರಿಗೂ ಶ್ರೇಷ್ಠನು.</verse>
				<verse number="32">ಆತನು ತಾನು ಕಂಡದ್ದನ್ನೂ ಕೇಳಿದ್ದನ್ನೂ ಕುರಿತೇ ಸಾಕ್ಷಿ ಹೇಳುತ್ತಾನೆ. ಆದರೂ ಆತನ ಮಾತನ್ನು ಯಾರೂ ಅಂಗೀಕರಿಸುವುದಿಲ್ಲ.</verse>
				<verse number="33">ಆತನ ಮಾತನ್ನು ಅಂಗೀಕರಿಸುವವನು ದೇವರು ಸತ್ಯಸ್ವರೂಪಿ ಎಂದು ಸಾದೃಶ್ಯಪಡಿಸುತ್ತಾನೆ.</verse>
				<verse number="34">ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ.</verse>
				<verse number="35">ಪಿತ ಪುತ್ರನನ್ನು ಪ್ರೀತಿಸಿ ಸರ್ವಸ್ವವನ್ನೂ ಆತನ ಕೈಗೆ ಕೊಟ್ಟಿದ್ದಾರೆ.</verse>
				<verse number="36">ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” ಎಂದು ಉತ್ತರಕೊಟ್ಟನು.</verse>
			</chapter>
			<chapter number="4">
				<verse number="1">ಯೊವಾನ್ನನಿಗಿಂತಲೂ ಯೇಸು ಸ್ವಾಮಿಯೇ ಹೆಚ್ಚುಮಂದಿ ಜನರನ್ನು ಶಿಷ್ಯರನ್ನಾಗಿಸಿಕೊಳ್ಳುತ್ತಾ, ಅವರಿಗೆ ದೀಕ್ಷಾಸ್ನಾನವನ್ನು ಮಾಡಿಸುತ್ತಾ ಇದ್ದಾರೆಂಬ ವಾರ್ತೆ ಫರಿಸಾಯರ ಕಿವಿಗೆ ಬಿದ್ದಿತು.</verse>
				<verse number="2">(ವಾಸ್ತವವಾಗಿ ದೀಕ್ಷಾಸ್ನಾನವನ್ನು ಮಾಡಿಸುತ್ತಿದ್ದವರು ಯೇಸುವಿನ ಶಿಷ್ಯರೇ ಹೊರತು ಯೇಸುವಲ್ಲ).</verse>
				<verse number="3">ಯೇಸು ಇದನ್ನು ತಿಳಿದು ಜುದೇಯವನ್ನು ಬಿಟ್ಟು ಮತ್ತೆ ಗಲಿಲೇಯಕ್ಕೆ ಹೊರಟರು.</verse>
				<verse number="4">ದಾರಿಯಲ್ಲಿ ಸಮಾರಿಯ ಪ್ರಾಂತ್ಯವನ್ನು ಹಾದುಹೋಗಬೇಕಾಗಿತ್ತು.</verse>
				<verse number="5">ಯೇಸು ಹೋಗುತ್ತಿರುವಾಗ ಸಮಾರಿಯದ ಸಿಖಾರೆಂಬ ಊರನ್ನು ತಲುಪಿದರು. ಈ ಊರಿನ ಪಕ್ಕದಲ್ಲೇ ಯಕೋಬನು ತನ್ನ ಮಗನಾದ ಜೋಸೆಫನಿಗೆ ಕೊಟ್ಟ ಭೂಮಿ ಇದೆ.</verse>
				<verse number="6">ಅಲ್ಲೇ ಯಕೋಬನ ಬಾವಿಯೂ ಇದೆ. ಪಯಣದಿಂದ ಬಳಲಿದ್ದ ಯೇಸು ಬಾವಿಯ ಬಳಿ ಕುಳಿತುಕೊಂಡರು. ಆಗ ಸುಮಾರು ಮಧ್ಯಾಹ್ನದ ಹೊತ್ತು.</verse>
				<verse number="7">ಒಬ್ಬ ಸಮಾರಿಯದ ಮಹಿಳೆ ನೀರು ಸೇದಲು ಅಲ್ಲಿಗೆ ಬಂದಳು. ಆಗ ಯೇಸು, “ಕುಡಿಯಲು ಕೊಂಚ ನೀರು ಕೊಡು,” ಎಂದು ಕೇಳಿದರು.</verse>
				<verse number="8">ಶಿಷ್ಯರು ಊಟಕ್ಕೆ ಏನಾದರೂ ಕೊಂಡುತರುವುದಕ್ಕೆ ಊರಿನೊಳಗೆ ಹೋಗಿದ್ದರು.</verse>
				<verse number="9">ಅದಕ್ಕೆ ಆಕೆ, “ನೀವು ಯೆಹೂದ್ಯರು, ನಾನು ಸಮಾರಿಯದವಳು. ಹೀಗಿರುವಲ್ಲಿ ನೀವು ನನ್ನಿಂದ ನೀರು ಕೇಳಬಹುದೆ?” ಎಂದಳು. (ಯೆಹೂದ್ಯರಿಗೂ ಸಮಾರಿಯದವರಿಗೂ ಹೊಕ್ಕುಬಳಕೆ ಇರಲಿಲ್ಲ).</verse>
				<verse number="10">ಆಗ ಯೇಸು, “ದೇವರು ಕೊಡುವ ವರದಾನವನ್ನು ಮತ್ತು ಕುಡಿಯಲು ನಿನ್ನಿಂದ ನೀರು ಕೇಳುತ್ತಿರುವ ವ್ಯಕ್ತಿಯನ್ನು ನೀನು ಅರಿತಿದ್ದರೆ ಆಗ ನೀನೇ ಆತನಲ್ಲಿ ಬೇಡುತ್ತಿದ್ದೆ. ಆತನು ನಿನಗೆ ಜೀವಜಲವನ್ನು ಕೊಡುತ್ತಿದ್ದನು,” ಎಂದು ಉತ್ತರಕೊಟ್ಟರು.</verse>
				<verse number="11">ಅದಕ್ಕೆ ಆಕೆ, “ನೀರು ಸೇದುವುದಕ್ಕೆ ನಿಮ್ಮಲ್ಲಿ ಏನೂ ಇಲ್ಲ, ಬಾವಿಯೂ ಆಳವಾಗಿದೆ; ಹೀಗಿರುವಲ್ಲಿ ನಿಮಗೆ ಜೀವಜಲ ಎಲ್ಲಿಂದ ಬಂದೀತು?</verse>
				<verse number="12">ನಮಗೆ ಈ ಬಾವಿಯನ್ನು ಕೊಟ್ಟವನು ನಮ್ಮ ಪಿತಾಮಹ ಯಕೋಬನು. ಆತನು, ಆತನ ಮಕ್ಕಳು ಮತ್ತು ದನಕರುಗಳು ಇದೇ ಬಾವಿಯ ನೀರನ್ನು ಕುಡಿದರು. ಅಂಥ ಪಿತಾಮಹನಿಗಿಂತ ತಾವು ದೊಡ್ಡವರೋ?” ಎಂದಳು.</verse>
				<verse number="13">ಆಗ ಯೇಸು, “ಈ ನೀರನ್ನು ಕುಡಿಯುವ ಎಲ್ಲರಿಗೂ ಮತ್ತೆ ದಾಹವಾಗುತ್ತದೆ.</verse>
				<verse number="14">ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.</verse>
				<verse number="15">ಅದಕ್ಕೆ ಆಕೆ, “ಸ್ವಾಮೀ, ಅಂಥ ನೀರನ್ನು ಕೊಡಿ; ಇನ್ನು ಮುಂದೆ ನನಗೆ ದಾಹವಾಗದಿರಲಿ. ನೀರು ಸೇದಲು ಇಷ್ಟು ದೂರ ಬರುವುದು ತಪ್ಪಲಿ,” ಎಂದಳು.</verse>
				<verse number="16">ಅದಕ್ಕೆ ಯೇಸು, “ಹೋಗಿ ನಿನ್ನ ಗಂಡನನ್ನು ಕರೆದುಕೊಂಡು ಬಾ,” ಎಂದು ಹೇಳಿದರು.</verse>
				<verse number="17">ಆಕೆ, “ನನಗೆ ಗಂಡನಿಲ್ಲ,” ಎಂದಳು.</verse>
				<verse number="18">“ಗಂಡನಿಲ್ಲವೆಂದು ಸರಿಯಾಗಿ ಹೇಳಿದೆ. ನಿನಗೆ ಐದು ಜನ ಗಂಡಂದಿರು ಇದ್ದರು. ಈಗ ನಿನ್ನೊಡನೆ ಇರುವವನು ನಿನ್ನ ಗಂಡನಲ್ಲ, ನೀನು ಹೇಳಿದ್ದು ಸರಿಯೇ,” ಎಂದರು ಯೇಸು ಸ್ವಾಮಿ.</verse>
				<verse number="19">ಅದಕ್ಕೆ ಆ ಮಹಿಳೆ, “ಸ್ವಾಮೀ, ತಾವು ಪ್ರವಾದಿ ಎಂದು ನನಗೀಗ ತಿಳಿಯಿತು.</verse>
				<verse number="20">ನಮ್ಮ ಪೂರ್ವಜರು ಈ ಬೆಟ್ಟದ ಮೇಲೆ ದೇವರನ್ನು ಆರಾಧಿಸುತ್ತಿದ್ದರು. ಆದರೆ ಆರಾಧಿಸತಕ್ಕ ಕ್ಷೇತ್ರ ಇರುವುದು ಜೆರುಸಲೇಮಿನಲ್ಲೇ ಎಂದು ಯೆಹೂದ್ಯರಾದ ನೀವು ಹೇಳುತ್ತೀರಲ್ಲಾ,” ಎಂದಳು.</verse>
				<verse number="21">ಆಗ ಯೇಸು, “ತಾಯಿ, ನಾನು ಹೇಳುವುದನ್ನು ಕೇಳು. ಪಿತನ ಆರಾಧನೆಗೆ ಈ ಬೆಟ್ಟಕ್ಕೂ ಬರಬೇಕಾಗಿಲ್ಲ; ಜೆರುಸಲೇಮಿಗೂ ಹೋಗಬೇಕಾಗಿಲ್ಲ. ಅಂಥ ಕಾಲವೂ ಬರುವುದು.</verse>
				<verse number="22">ನೀವು ಆರಾಧಿಸುವುದು ಯಾರೆಂದು ನಿಮಗೇ ತಿಳಿಯದು. ನಾವು ಆರಾಧಿಸುವುದು ಯಾರೆಂದು ನಮಗೆ ತಿಳಿದಿದೆ. ಏಕೆಂದರೆ ಲೋಕೋದ್ಧಾರಕ ಬರುವುದು ಯೆಹೂದ್ಯರಿಂದಲೇ.</verse>
				<verse number="23">ಕಾಲ ಬರುವುದು; ಅದು ಈಗಲೇ ಬಂದಿದೆ. ಇನ್ನು ಮೇಲೆ ನಿಜವಾದ ಆರಾಧಕರು ಪಿತನನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸುವರು. ಅಂಥವರೇ ತಮ್ಮನ್ನು ಆರಾಧಿಸಬೇಕೆಂದು ಪಿತ ಆಶಿಸುತ್ತಾರೆ.</verse>
				<verse number="24">ದೇವರು ಆತ್ಮಸ್ವರೂಪಿ, ಅವರನ್ನು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು,” ಎಂದು ಹೇಳಿದರು.</verse>
				<verse number="25">ಆಕೆ, “ಅಭಿಷಿಕ್ತನಾದ ಲೋಕೋದ್ಧಾರಕ ಬರುವನೆಂದು ನಾನು ಬಲ್ಲೆ. ಆತನು ಬಂದಾಗ ಎಲ್ಲವನ್ನೂ ತಿಳಿಸುವನು,” ಎಂದು ಹೇಳಿದಳು.</verse>
				<verse number="26">ಆಗ ಯೇಸು, “ನಿನ್ನೊಡನೆ ಮಾತನಾಡುತ್ತಿರುವ ನಾನೇ ಆತನು,” ಎಂದು ನುಡಿದರು.</verse>
				<verse number="27">ಅಷ್ಟರಲ್ಲಿ ಹಿಂದಿರುಗಿ ಬಂದ ಶಿಷ್ಯರು ಯೇಸು ಆ ಮಹಿಳೆಯೊಡನೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೆ, “ಏನು ಬೇಕು?” ಎಂದು ಆಕೆಯನ್ನಾಗಲಿ. “ಆಕೆಯೊಡನೆ ಏಕೆ ಮಾತನಾಡುತ್ತಿದ್ದೀರಿ?” ಎಂದು ಯೇಸುವನ್ನಾಗಲಿ ಅವರು ಕೇಳಲಿಲ್ಲ.</verse>
				<verse number="28">ಆ ಮಹಿಳೆ ತನ್ನ ಕೊಡವನ್ನು ಅಲ್ಲಿಯೇ ಬಿಟ್ಟು ಊರಿಗೆ ನಡೆದಳು.</verse>
				<verse number="29">“ನಾನು ಮಾಡಿದ್ದ ಕೃತ್ಯಗಳನ್ನೆಲ್ಲಾ ಕಂಡಂತೆ ತಿಳಿಸಿದ ಒಬ್ಬ ವ್ಯಕ್ತಿ ಅಲ್ಲಿ ಇದ್ದಾರೆ, ಬಂದು ನೋಡಿ, ಅವರೇ ಅಭಿಷಿಕ್ತನಾದ ಲೋಕೋದ್ಧಾರಕ ಏಕಾಗಿರಬಾರದು?” ಎಂದು ಊರಿನ ಜನರನ್ನು ಕರೆದಳು.</verse>
				<verse number="30">ಅವರು ಯೇಸುವಿನ ಬಳಿಗೆ ಬಂದರು.</verse>
				<verse number="31">ಈ ಮಧ್ಯೆ ಶಿಷ್ಯರು, “ಗುರುದೇವಾ, ಊಟಮಾಡಿ,” ಎಂದು ಯೇಸುವನ್ನು ಒತ್ತಾಯಮಾಡಿದರು.</verse>
				<verse number="32">ಆಗ ಯೇಸು, “ನಿಮಗೆ ತಿಳಿಯದಂಥ ಆಹಾರ ನನ್ನಲ್ಲಿದೆ,” ಎಂದರು.</verse>
				<verse number="33">ಶಿಷ್ಯರು, “ಯಾರಾದರೂ ಅವರಿಗೆ ತಿನ್ನಲು ತಂದುಕೊಟ್ಟಿರಬಹುದೆ?” ಎಂದು ಮಾತನಾಡಿಕೊಂಡರು.</verse>
				<verse number="34">ಯೇಸು ಅವರಿಗೆ, “ನನ್ನನ್ನು ಕಳುಹಿಸಿದಾತನ ಚಿತ್ತವನ್ನು ನೆರವೇರಿಸುವುದೇ ನನಗೇ ಆಹಾರ. ಆತನು ಕೊಟ್ಟ ಕಾರ್ಯಗಳನ್ನು ಪೂರೈಸುವುದೇ ನನಗೆ ತಿಂಡಿತೀರ್ಥ.</verse>
				<verse number="35">ಇನ್ನು ನಾಲ್ಕು ತಿಂಗಳು ಆದ ಮೇಲೆ ಸುಗ್ಗಿ ಬರುತ್ತದೆ ಎಂದು ನೀವು ಹೇಳುವುದಿಲ್ಲವೆ? ಇಗೋ, ಕಣ್ಣುಹಾಯಿಸಿ ನೋಡಿ; ಬಲಿತು ಕೊಯ್ಲಿಗೆ ಬಂದಿರುವ ಹೊಲಗಳನ್ನು ನೋಡಿ.</verse>
				<verse number="36">ಕೊಯ್ದವನು ಈಗಾಗಲೇ ಕೂಲಿಯನ್ನು ಪಡೆಯುತ್ತಾನೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಿಗೆ ಸಂತೋಷಪಡುತ್ತಾರೆ.</verse>
				<verse number="37">ಬಿತ್ತುವವನೊಬ್ಬ, ಕೊಯ್ಯುವವನಿನ್ನೊಬ್ಬ,’ ಎಂಬ ನಾಣ್ನುಡಿ ನಿಜವಾದುದು.</verse>
				<verse number="38">ನೀವು ದುಡಿಯದ ಎಡೆಯಲ್ಲಿ ಕೊಯ್ಲುಮಾಡಲು ನಾನು ನಿಮ್ಮನ್ನು ಕಳುಹಿಸಿದ್ದೇನೆ. ದುಡಿದವರು ಬೇರೆ, ಅವರ ದುಡಿಮೆಯ ಫಲ ಬರುವುದು ನಿಮ್ಮ ಪಾಲಿಗೆ,” ಎಂದು ಹೇಳಿದರು.</verse>
				<verse number="39">‘ನಾನು ಮಾಡಿದ ಕೃತ್ಯಗಳನ್ನೆಲ್ಲಾ ಕಂಡಂತೆ ಹೇಳಿದ ವ್ಯಕ್ತಿ’ ಎಂದು ಸಾರಿದ ಮಹಿಳೆಯ ಮಾತಿನಿಂದ ಸಮಾರಿಯ ಊರಿನ ಹಲವು ಮಂದಿಗೆ ಯೇಸುವಿನಲ್ಲಿ ನಂಬಿಕೆ ಹುಟ್ಟಿತು.</verse>
				<verse number="40">ಎಂದೇ ಆ ಊರಿನ ಜನರು ಯೇಸುವಿನ ಬಳಿಗೆ ಬಂದು ತಮ್ಮಲ್ಲಿಯೇ ತಂಗಬೇಕೆಂದು ಬೇಡಿಕೊಂಡರು. ಅಂತೆಯೇ ಯೇಸು, ಅಲ್ಲಿ ಎರಡು ದಿನ ಉಳಿದರು.</verse>
				<verse number="41">ಇನ್ನೂ ಅನೇಕರಿಗೆ ಯೇಸುವಿನ ಬೋಧನೆಯನ್ನು ಅವರ ಬಾಯಿಂದಲೇ ಕೇಳಿ ಅವರಲ್ಲಿ ನಂಬಿಕೆ ಮೂಡಿತು.</verse>
				<verse number="42">ಆಗ ಅವರು, ಆ ಮಹಿಳೆಗೆ, “ನೀನು ಹೇಳಿದುದರಿಂದ ಮಾತ್ರವೇ ಈಗ ನಾವು ನಂಬುತ್ತಿಲ್ಲ, ನಾವೇ ಕಿವಿಯಾರೆ ಕೇಳಿ ನಂಬಿದ್ದೇವೆ; ಲೋಕೋದ್ಧಾರಕ ಇವರೇ ಎಂದು ನಮಗೀಗ ತಿಳಿಯಿತು,” ಎಂದರು.</verse>
				<verse number="43">ಎರಡು ದಿನಗಳಾದ ಬಳಿಕ ಯೇಸು ಸ್ವಾಮಿ ಅಲ್ಲಿಂದ ಗಲಿಲೇಯಕ್ಕೆ ಹೊರಟರು.</verse>
				<verse number="44">ಪ್ರವಾದಿಗೆ ಸ್ವಗ್ರಾಮದಲ್ಲಿ ಮರ್ಯಾದೆ ಇಲ್ಲ ಎಂದು ಅವರೇ ಸಾರಿದ್ದರು.</verse>
				<verse number="45">ಗಲಿಲೇಯವನ್ನು ತಲುಪಿದೊಡನೆ ಜನರು ಅವರನ್ನು ಆದರದಿಂದ ಬರಮಾಡಿಕೊಂಡರು. ಏಕೆಂದರೆ, ಹಬ್ಬಕ್ಕಾಗಿ ಆ ಜನರು ಜೆರುಸಲೇಮಿಗೆ ಹೋಗಿದ್ದಾಗ ಹಬ್ಬದ ಸಮಯದಲ್ಲಿ ಯೇಸು ಮಾಡಿದ್ದನ್ನೆಲ್ಲಾ ನೋಡಿದ್ದರು.</verse>
				<verse number="46">ಯೇಸು ಗಲಿಲೇಯದ ಕಾನಾ ಊರಿಗೆ ಮರಳಿ ಬಂದರು. ಅವರು ಹಿಂದೆ ನೀರನ್ನು ದ್ರಾಕ್ಷಾರಸವನ್ನಾಗಿ ಮಾಡಿದ್ದು ಅಲ್ಲಿಯೇ. ಕಫೆರ್ನವುಮಿನಲ್ಲಿ ರಾಜಸೇವೆಯಲ್ಲಿದ್ದ ಒಬ್ಬ ಅಧಿಕಾರಿಯ ಮಗನಿಗೆ ಕಾಯಿಲೆಯಾಗಿತ್ತು.</verse>
				<verse number="47">ಯೇಸು ಜುದೇಯದಿಂದ ಗಲಿಲೇಯಕ್ಕೆ ಬಂದಿರುವುದನ್ನು ಕೇಳಿದ ಆ ಅಧಿಕಾರಿ, ಅವರ ಬಳಿಗೆ ಬಂದು, ಸಾವಿನ ದವಡೆಯಲ್ಲಿರುವ ತನ್ನ ಮಗನನ್ನು ಬಂದು ಬದುಕಿಸಬೇಕೆಂದು ಬೇಡಿಕೊಂಡನು.</verse>
				<verse number="48">ಯೇಸು ಅವನಿಗೆ, “ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಕಂಡ ಹೊರತು ನೀವು ನಂಬುವುದಿಲ್ಲವಲ್ಲಾ,” ಎಂದರು.</verse>
				<verse number="49">ಆದರೂ ಆ ಅಧಿಕಾರಿ, “ನನ್ನ ಮಗನು ಪ್ರಾಣಬಿಡುವ ಮೊದಲೇ ಬನ್ನಿ ಸ್ವಾಮೀ,” ಎಂದು ಅಂಗಲಾಚಿದನು.</verse>
				<verse number="50">ಆಗ ಯೇಸು, “ಹೋಗು, ನಿನ್ನ ಮಗನು ಬದುಕುತ್ತಾನೆ,” ಎಂದು ಹೇಳಿದರು. ಆ ಅಧಿಕಾರಿ ಯೇಸುವಿನ ಮಾತನ್ನು ನಂಬಿ ಹೊರಟನು.</verse>
				<verse number="51">ಅವನು ಅರ್ಧದಾರಿಯಲ್ಲಿ ಇದ್ದಾಗಲೇ ಆಳುಗಳು ಅವನಿಗೆ ಎದುರಾಗಿ ಬಂದು, “ನಿಮ್ಮ ಮಗ ಬದುಕಿಕೊಂಡ,” ಎಂದು ತಿಳಿಸಿದರು.</verse>
				<verse number="52">ಎಷ್ಟುಹೊತ್ತಿಗೆ ತನ್ನ ಮಗ ಚೇತರಿಸಿಕೊಂಡನೆಂದು ಆ ಅಧಿಕಾರಿ ವಿಚಾರಿಸಿದಾಗ, “ನಿನ್ನೆ ಮಧ್ಯಾಹ್ನ ಒಂದು ಗಂಟೆಗೆ ಅವನ ಜ್ವರ ಬಿಟ್ಟಿತು,” ಎಂದು ಆಳುಗಳು ಉತ್ತರಕೊಟ್ಟರು.</verse>
				<verse number="53">‘ನಿನ್ನ ಮಗ ಬದುಕುತ್ತಾನೆ’ ಎಂದು ಯೇಸು ಹೇಳಿದ್ದ ಗಳಿಗೆಯಲ್ಲಿಯೇ ತನ್ನ ಮಗ ಬದುಕಿಕೊಂಡನೆಂದು ತಂದೆಗೆ ತಿಳಿಯಿತು. ಅವನೂ ಅವನ ಮನೆಯವರೆಲ್ಲರೂ ಯೇಸುವನ್ನು ವಿಶ್ವಾಸಿಸಿದರು.</verse>
				<verse number="54">ಯೇಸು ಜುದೇಯದಿಂದ ಗಲಿಲೇಯಕ್ಕೆ ಬಂದು, ಮಾಡಿದ ಎರಡನೆಯ ಸೂಚಕಕಾರ್ಯ ಇದು.</verse>
			</chapter>
			<chapter number="5">
				<verse number="1">ಇದಾದ ಮೇಲೆ ಯೆಹೂದ್ಯರ ಹಬ್ಬ ಬಂದಿತು. ಯೇಸು ಸ್ವಾಮಿ ಜೆರುಸಲೇಮಿಗೆ ತೆರಳಿದರು.</verse>
				<verse number="2">ಅಲ್ಲಿ, ‘ಕುರಿಬಾಗಿಲು’ ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಹಿಬ್ರಿಯ ಭಾಷೆಯಲ್ಲಿ ‘ಬೆತ್ಸಥ’ ಎಂದು ಕರೆಯುತ್ತಾರೆ.</verse>
				<verse number="3">ಕುರುಡರು, ಕುಂಟರು, ಪಾರ್ಶ್ವವಾಯು ಪೀಡಿತರು ಮೊದಲಾದ ಅನೇಕ ರೋಗಿಗಳು ಆ ಮಂಟಪಗಳಲ್ಲಿ ಬಿದ್ದುಕೊಳ್ಳುತ್ತಾ ಇದ್ದರು.</verse>
				<verse number="4"></verse>
				<verse number="5">ಮೂವತ್ತೆಂಟು ವರ್ಷ ಕಾಯಿಲೆಯಿಂದ ನರಳುತ್ತಿದ್ದ ಒಬ್ಬ ರೋಗಿ ಅಲ್ಲಿ ಮಲಗಿದ್ದನು.</verse>
				<verse number="6">ಯೇಸು ಅವನನ್ನು ನೋಡಿ, ದೀರ್ಘಕಾಲದಿಂದ ಅವನು ಹಾಗೆ ಬಿದ್ದುಕೊಂಡಿರುವುದನ್ನು ತಿಳಿದು, “ನಿನಗೆ ಗುಣಹೊಂದಲು ಮನಸ್ಸಿದೆಯೇ?’ ಎಂದು ಕೇಳಿದರು.</verse>
				<verse number="7">“ಸ್ವಾಮೀ, ನೀರು ಉಕ್ಕಿದಾಗ ನನ್ನನ್ನು ಕೊಳಕ್ಕಿಳಿಸಲು ಸಹಾಯಕರು ಇರುವುದಿಲ್ಲ; ನಾನು ಹೋಗುವಷ್ಟರಲ್ಲೇ ಬೇರೆ ಯಾರಾದರೂ ಇಳಿದುಬಿಡುತ್ತಾರೆ,” ಎಂದು ಉತ್ತರಿಸಿದ ಆ ರೋಗಿ.</verse>
				<verse number="8">ಯೇಸು ಅವನಿಗೆ, “ಎದ್ದು ನಿಲ್ಲು, ನಿನ್ನ ಹಾಸಿಗೆಯನ್ನು ಸುತ್ತಿಕೊಂಡು ನಡೆ,” ಎಂದರು.</verse>
				<verse number="9">ಆ ಕ್ಷಣವೇ ಅವನು ಗುಣಹೊಂದಿ, ತನ್ನ ಹಾಸಿಗೆಯನ್ನು ಸುತ್ತಿಕೊಂಡು ನಡೆಯತೊಡಗಿದನು.</verse>
				<verse number="10">ಅದು ಸಬ್ಬತ್ತಿನ ದಿನವಾಗಿತ್ತು. ಆದುದರಿಂದ ಯೆಹೂದ್ಯ ಅಧಿಕಾರಿಗಳು ಗುಣಹೊಂದಿದ ಆ ಮನುಷ್ಯನಿಗೆ, “ಇಂದು ಸಬ್ಬತ್ತಿನ ದಿನ, ನೀನು ಹಾಸಿಗೆಯನ್ನು ಎತ್ತಿಕೊಂಡು ನಡೆಯುವುದು ನಿಷಿದ್ಧ,” ಎಂದು ಹೇಳಿದರು.</verse>
				<verse number="11">ಅದಕ್ಕೆ ಅವನು: “ನನ್ನನ್ನು ಗುಣಪಡಿಸಿದವರೇ, ‘ನಿನ್ನ ಹಾಸಿಗೆಯನ್ನು ಎತ್ತಿಕೊಂಡು ನಡೆ’ ಎಂದು ಹೇಳಿದರು,” ಎಂದು ಉತ್ತರಕೊಟ್ಟನು.</verse>
				<verse number="12">ಅಧಿಕಾರಿಗಳು, “ಅದನ್ನು ಎತ್ತಿಕೊಂಡು ನಡೆ ಎಂದ ಅವನು ಯಾರು?” ಎಂದು ಪ್ರಶ್ನಿಸಿದರು.</verse>
				<verse number="13">ತನ್ನನ್ನು ಗುಣಪಡಿಸಿದವರು ಯಾರೆಂದು ಅವನಿಗೆ ತಿಳಿದಿರಲಿಲ್ಲ; ಅಲ್ಲದೆ ಜನಸಂದಣಿಯ ನಿಮಿತ್ತ ಯೇಸು ಆಗಲೇ ಮರೆಯಾಗಿಬಿಟ್ಟಿದ್ದರು.</verse>
				<verse number="14">ಅನಂತರ ದೇವಾಲಯದಲ್ಲಿ ಯೇಸು ಆ ಮನುಷ್ಯನನ್ನು ಕಂಡು, “ನೋಡು, ನೀನು ಗುಣಹೊಂದಿರುವೆ; ಇನ್ನುಮೇಲೆ ಪಾಪಮಾಡುವುದನ್ನು ಬಿಟ್ಟುಬಿಡು. ಇಲ್ಲದಿದ್ದರೆ ನಿನ್ನ ಗತಿ ಇನ್ನಷ್ಟು ಚಿಂತಾಜನಕವಾದೀತು,” ಎಂದರು.</verse>
				<verse number="15">ಆ ಮನುಷ್ಯ ಅಲ್ಲಿಂದ ಯೆಹೂದ್ಯರ ಬಳಿಗೆ ಹೋಗಿ, “ನನ್ನನ್ನು ಗುಣಪಡಿಸಿದವನು ಯೇಸುವೇ,” ಎಂದು ತಿಳಿಸಿದನು.</verse>
				<verse number="16">ಯೇಸು ಇದನ್ನು ಸಬ್ಬತ್ ದಿನದಲ್ಲಿ ಮಾಡಿದ್ದರಿಂದ ಯೆಹೂದ್ಯರು ಅವರಿಗೆ ಕಿರುಕುಳಕೊಡಲು ತೊಡಗಿದರು.</verse>
				<verse number="17">ಅದಕ್ಕೆ ಉತ್ತರವಾಗಿ ಯೇಸು, “ನನ್ನ ಪಿತ ಸತತವೂ ಕಾರ್ಯನಿರತರು. ಅವರಂತೆಯೇ ನಾನು ಸದಾ ಕಾರ್ಯನಿರತನಾಗಿದ್ದೇನೆ,” ಎಂದು ನುಡಿದರು.</verse>
				<verse number="18">ಯೇಸು ಸಬ್ಬತ್ತಿನ ನಿಯಮವನ್ನು ಮುರಿದುದೇ ಅಲ್ಲದೆ, ದೇವರನ್ನು ತನ್ನ ಪಿತನೆಂದು ಹೇಳಿಕೊಳ್ಳುತ್ತಾ, ತನ್ನನ್ನೇ ದೇವರಿಗೆ ಸರಿಸಮ ಮಾಡಿಕೊಳ್ಳುತ್ತಿದ್ದಾನೆಂದು ಯೆಹೂದ್ಯರು ಅವರನ್ನು ಕೊಲ್ಲಲು ಮತ್ತಷ್ಟು ಹವಣಿಸಿದರು.</verse>
				<verse number="19">ಯೇಸು ಸ್ವಾಮಿ ಅವರನ್ನು ಉದ್ದೇಶಿಸಿ ಹೀಗೆಂದರು: “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಪುತ್ರನು ತನ್ನಷ್ಟಕ್ಕೆ ತಾನೇ ಏನೂ ಮಾಡಲಾರನು; ಪಿತನು ಮಾಡುವುದನ್ನು ಕಂಡು ತಾನೂ ಹಾಗೆಯೇ ಮಾಡುತ್ತಾನೆ. ಪಿತನು ಮಾಡುವುದನ್ನೇ ಪುತ್ರನೂ ಮಾಡುವುದು.</verse>
				<verse number="20">ಪುತ್ರನೆಂದರೆ ಪಿತನಿಗೆ ಪ್ರೀತಿ. ಆದುದರಿಂದ ತಾವು ಮಾಡುವುದನ್ನೆಲ್ಲಾ ಪುತ್ರನಿಗೆ ತೋರಿಸುತ್ತಾರೆ. ಇದಲ್ಲದೆ ಇನ್ನೂ ಎಷ್ಟೋ ಮಿಗಿಲಾದ ಕಾರ್ಯಗಳನ್ನು ಪುತ್ರನಿಗೆ ತೋರಿಸುತ್ತಾರೆ. ಅವುಗಳನ್ನು ಕಂಡು ನೀವು ಬೆರಗಾಗುವಿರಿ.</verse>
				<verse number="21">ಪಿತನು ಸತ್ತವರನ್ನು ಎಬ್ಬಿಸಿ ಅವರಿಗೆ ಜೀವವನ್ನು ಕೊಡುವಂತೆಯೇ ಪುತ್ರನೂ ತನಗೆ ಬೇಕಾದವರಿಗೆ ಜೀವವನ್ನು ಕೊಡುತ್ತಾನೆ.</verse>
				<verse number="22">ಅಲ್ಲದೆ, ಪಿತನು ಯಾರನ್ನೂ ತೀರ್ಪಿಗೆ ಗುರಿಮಾಡುವುದಿಲ್ಲ. ತೀರ್ಪುಕೊಡುವ ಅಧಿಕಾರವನ್ನೆಲ್ಲಾ ಅವರು ಪುತ್ರನಿಗೆ ಕೊಟ್ಟಿದ್ದಾರೆ.</verse>
				<verse number="23">ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.</verse>
				<verse number="24">“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನ ಮಾತಿಗೆ ಕಿವಿಗೊಟ್ಟು ನನ್ನನ್ನು ಕಳುಹಿಸಿದ ಆತನಲ್ಲಿ ವಿಶ್ವಾಸವಿಡುವವನು ನಿತ್ಯಜೀವವನ್ನು ಪಡೆದಿರುತ್ತಾರೆ. ಅವನು ಖಂಡನೆಗೆ ಗುರಿ ಆಗನು; ಅವನು ಈಗಾಗಲೇ ಸಾವನ್ನು ದಾಟಿ ಜೀವವನ್ನು ಸೇರಿರುತ್ತಾನೆ.</verse>
				<verse number="25">ಸತ್ಯವಾಗಿ ನಿಮಗೆ ಮತ್ತೆ ಹೇಳುತ್ತೇನೆ; ಸತ್ತವರು ದೇವರ ಪುತ್ರನ ಧ್ವನಿಯನ್ನು ಕೇಳುವ ಕಾಲ ಬರುವುದು; ಈಗಾಗಲೇ ಬಂದಿದೆ; ಈ ಧ್ವನಿಯನ್ನು ಕೇಳುವವರು ಜೀವಿಸುವರು.</verse>
				<verse number="26">ಪಿತನು ತಾವೇ ಸ್ವಯಂ ಜೀವಮೂಲವಾಗಿರುವಂತೆ ಪುತ್ರನು ಸಹ ಸ್ವಯಂ ಜೀವಮೂಲವಾಗಿರುವಂತೆ ಕರುಣಿಸಿದ್ದಾರೆ.</verse>
				<verse number="27">ಅದೂ ಅಲ್ಲದೆ, ಆತನು ನರಪುತ್ರನಾಗಿರುವ ಕಾರಣ ತೀರ್ಪನ್ನು ಕೊಡುವ ಹಕ್ಕನ್ನು ಆತನಿಗೇ ದಯಪಾಲಿಸಿದ್ದಾರೆ.</verse>
				<verse number="28">ಇದನ್ನು ಕೇಳಿ ನೀವು ಬೆರಗಾಗುವುದು ಬೇಡ. ಸತ್ತು ಸಮಾಧಿಯಲ್ಲಿರುವವರೆಲ್ಲರೂ ಆತನ ಧ್ವನಿಯನ್ನು ಕೇಳುವ ಕಾಲ ಬರುವುದು.</verse>
				<verse number="29">ಹಾಗೆ ಕೇಳಿದವರೆಲ್ಲಾ ಸಮಾಧಿಯನ್ನು ಬಿಟ್ಟು ಎದ್ದುಬರುವರು; ಸಜ್ಜನರು ಸಜ್ಜೀವಕ್ಕಾಗಿ ಪುನರುತ್ಥಾನರಾಗುವರು, ದುರ್ಜನರು ದಂಡನಾ ತೀರ್ಪಿಗಾಗಿ ಪುನರುತ್ಥಾನ ಆಗುವರು.</verse>
				<verse number="30">“ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆ. ಪಿತನು ನನಗೆ ತಿಳಿಸಿದ ಪ್ರಕಾರ ನಾನು ತೀರ್ಪು ಕೊಡುತ್ತೇನೆ. ಈ ನನ್ನ ತೀರ್ಪು ನ್ಯಾಯಬದ್ಧ ಆದುದು. ಏಕೆಂದರೆ, ನಾನು ನನ್ನ ಸ್ವಂತ ಇಚ್ಛೆಯನ್ನು ನೆರವೇರಿಸದೆ ಪಿತನ ಚಿತ್ತವನ್ನೇ ನೆರವೇರಿಸಲು ಆಶಿಸುತ್ತೇನೆ.</verse>
				<verse number="31">“ನನ್ನ ಪರವಾಗಿ ನಾನೇ ಸಾಕ್ಷಿನೀಡಿದರೆ ನನ್ನ ಸಾಕ್ಷಿಗೆ ಬೆಲೆಯಿರದು.</verse>
				<verse number="32">ನನ್ನ ಪರವಾಗಿ ಸಾಕ್ಷಿ ನೀಡುವಾತನು ಇನ್ನೊಬ್ಬನಿದ್ದಾನೆ. ಆತನು ನೀಡುವ ಸಾಕ್ಷ್ಯಕ್ಕೆ ಬೆಲೆಯಿದೆ ಎಂದು ನಾನು ಬಲ್ಲೆ.</verse>
				<verse number="33">ನೀವೇ ಯೊವಾನ್ನನ ಬಳಿಗೆ ದೂತರನ್ನು ಕಳುಹಿಸಿದ್ದಿರಿ. ಆತನು ಸತ್ಯವನ್ನು ಕುರಿತು ಸಾಕ್ಷಿ ಹೇಳಿದ್ದಾನೆ.</verse>
				<verse number="34">ನನಗೆ ಮಾನವ ಸಾಕ್ಷಿ ಬೇಕೆಂದು ಅಲ್ಲ; ಆದರೆ ಇದನ್ನೆಲ್ಲಾ ನಿಮ್ಮ ಉದ್ಧಾರಕ್ಕೆಂದು ನಾನು ಹೇಳುತ್ತಿದ್ದೇನೆ.</verse>
				<verse number="35">ಯೊವಾನ್ನನು ಉಜ್ವಲವಾಗಿ ಉರಿಯುವ ದೀಪದಂತೆ ಇದ್ದನು. ಆ ಬೆಳಕಿನಲ್ಲಿ ನೀವು ಸ್ವಲ್ಪಕಾಲ ನಲಿದಾಡಿದಿರಿ.</verse>
				<verse number="36">ಯೊವಾನ್ನನು ನೀಡಿದ ಸಾಕ್ಷ್ಯಕ್ಕಿಂತಲೂ ಮಿಗಿಲಾದ ಸಾಕ್ಷ್ಯ ನನಗುಂಟು; ನಾನು ಸಾಧಿಸುತ್ತಿರುವ ಸುಕೃತ್ಯಗಳೇ, ಅಂದರೆ, ಪಿತನು ನನಗೆ ಮಾಡಿಮುಗಿಸಲು ಕೊಟ್ಟ ಕಾರ್ಯಗಳೇ, ನಾನು ಪಿತನಿಂದ ಬಂದವನೆಂದು ನನ್ನ ಪರವಾಗಿ ಸಾಕ್ಷಿಕೊಡುತ್ತವೆ.</verse>
				<verse number="37">ನನ್ನನ್ನು ಕಳುಹಿಸಿದ ಪಿತನೇ ನನ್ನ ಪರವಾಗಿ ಸಾಕ್ಷಿನೀಡಿದ್ದಾರೆ. ನೀವಾದರೋ ಅವರ ಧ್ವನಿಯನ್ನು ಎಂದೂ ಕೇಳಿಲ್ಲ, ಅವರ ದರ್ಶನವನ್ನು ಎಂದೂ ಕಂಡಿಲ್ಲ.</verse>
				<verse number="38">ಅವರ ಸಂದೇಶ ನಿಮ್ಮಲ್ಲಿ ನೆಲಸಿಲ್ಲ. ಏಕೆಂದರೆ, ಅವರು ಕಳುಹಿಸಿದವನಲ್ಲಿ ನೀವು ವಿಶ್ವಾಸವಿಡಲಿಲ್ಲ.</verse>
				<verse number="39">ಪವಿತ್ರಗ್ರಂಥದಿಂದಲೇ ನಿತ್ಯಜೀವ ಲಭಿಸುವುದೆಂದು ಭಾವಿಸಿ, ನೀವು ಅದನ್ನು ಪರಿಶೀಲಿಸಿ ನೋಡುತ್ತೀರಿ. ಆ ಗ್ರಂಥವು ಸಹ ನನ್ನ ಪರವಾಗಿ ಸಾಕ್ಷಿಹೇಳುತ್ತದೆ.</verse>
				<verse number="40">ಆದರೂ ನಿತ್ಯಜೀವವನ್ನು ಪಡೆಯುವುದಕ್ಕಾಗಿ ನನ್ನ ಬಳಿಗೆ ಬರಲು ನಿಮಗೆ ಇಷ್ಟವಿಲ್ಲ.</verse>
				<verse number="41">“ನಾನು ಮನುಷ್ಯರಿಂದ ಬರುವ ಗೌರವವನ್ನು ಅರಸುವುದಿಲ್ಲ.</verse>
				<verse number="42">ದೇವರ ಮೇಲೆ ನಿಮಗೆ ಪ್ರೀತಿಯಿಲ್ಲವೆಂದು ನಾನು ಚೆನ್ನಾಗಿ ಬಲ್ಲೆ.</verse>
				<verse number="43">ನಾನು ಬಂದಿರುವುದು ಪಿತನ ಹೆಸರಿನಲ್ಲೇ. ಆದರೂ ನೀವು ನನ್ನನ್ನು ಬರಮಾಡಿಕೊಳ್ಳುವುದಿಲ್ಲ. ಬೇರೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದನೆಂದರೆ ಅಂಥವನನ್ನು ನೀವು ಬರಮಾಡಿಕೊಳ್ಳುತ್ತೀರಿ.</verse>
				<verse number="44">ಕಾರಣ, ದೇವರಿಂದ ಸಿಗುವಂಥ ಗೌರವವನ್ನು ಅರಸದೆ ನಿಮ್ಮ ನಿಮ್ಮಲ್ಲೇ ಪರಸ್ಪರ ಗೌರವವನ್ನು ಬಯಸುತ್ತೀರಿ. ಹೀಗಿರುವಲ್ಲಿ ನಿಮ್ಮಲ್ಲಿ ವಿಶ್ವಾಸಮೂಡಲು ಹೇಗೆ ತಾನೆ ಸಾಧ್ಯ? ಪಿತನ ಮುಂದೆ ನಾನು ನಿಮ್ಮನ್ನು ಆಪಾದಿಸುತ್ತಿರುವೆನೆಂದು ಎಣಿಸಬೇಡಿ.</verse>
				<verse number="45">ಆಪಾದಿಸುವವನು ಒಬ್ಬನಿದ್ದಾನೆ. ಆತನೇ ನೀವು ಆಶ್ರಯಿಸಿಕೊಂಡಿರುವ ಮೋಶೆ.</verse>
				<verse number="46">ಮೋಶೆಯಲ್ಲಿ ನಿಮಗೆ ವಿಶ್ವಾಸ ಇದ್ದಿದ್ದರೆ ನನ್ನಲ್ಲಿ ವಿಶ್ವಾಸ ಇಡುತ್ತಿದ್ದಿರಿ. ಏಕೆಂದರೆ, ಆತನು ಬರೆದುದು ನನ್ನನ್ನು ಕುರಿತೇ.</verse>
				<verse number="47">ಆತನೇ ಬರೆದುದರಲ್ಲಿ ನಿಮಗೆ ನಂಬಿಕೆಯಿಲ್ಲವೆಂದ ಮೇಲೆ ನನ್ನ ಮಾತಿನಲ್ಲಿ ನಿಮಗೆ ಹೇಗೆ ನಂಬಿಕೆ ಹುಟ್ಟೀತು?”</verse>
			</chapter>
			<chapter number="6">
				<verse number="1">ಯೇಸುಸ್ವಾಮಿ ಗಲಿಲೇಯ ಸರೋವರವನ್ನು ದಾಟಿ, ಆಚೆಯ ದಡಕ್ಕೆ ಹೋದರು. ಅದಕ್ಕೆ ತಿಬೇರಿಯ ಸರೋವರವೆಂದು ಹೆಸರು.</verse>
				<verse number="2">ಜನರ ದೊಡ್ಡ ಗುಂಪೊಂದು ಅವರ ಹಿಂದೆ ಹೋಯಿತು. ಏಕೆಂದರೆ, ಯೇಸು ಸೂಚಕಕಾರ್ಯಗಳನ್ನು ಮಾಡುತ್ತಾ ರೋಗಪೀಡಿತರನ್ನು ಗುಣಪಡಿಸುತ್ತಾ ಇದ್ದುದನ್ನು ಆ ಜನರು ನೋಡಿದ್ದರು.</verse>
				<verse number="3">ಯೇಸು ಬೆಟ್ಟವನ್ನು ಹತ್ತಿ ತಮ್ಮ ಶಿಷ್ಯರ ಸಂಗಡ ಕುಳಿತುಕೊಂಡರು.</verse>
				<verse number="4">ಯೆಹೂದ್ಯರ ಪಾಸ್ಕ ಹಬ್ಬವು ಹತ್ತಿರವಾಗಿತ್ತು.</verse>
				<verse number="5">ಯೇಸು ಕಣ್ಣು ಹಾಯಿಸಿ ನೋಡಿದಾಗ ಆ ದೊಡ್ಡ ಗುಂಪು ತಮ್ಮ ಕಡೆಗೆ ಬರುವುದನ್ನು ಕಂಡರು. “ಈ ಜನರ ಊಟಕ್ಕೆ ರೊಟ್ಟಿಯನ್ನು ನಾವು ಎಲ್ಲಿಂದ ಕೊಂಡುಕೊಳ್ಳುವುದು?” ಎಂದು ಯೇಸು ಫಿಲಿಪ್ಪನನ್ನು ಕೇಳಿದರು.</verse>
				<verse number="6">ಫಿಲಿಪ್ಪನನ್ನು ಪರೀಕ್ಷಿಸುವ ಸಲುವಾಗಿ ಅವರು ಹಾಗೆ ಹೇಳಿದರು. ಏಕೆಂದರೆ, ತಾವು ಮಾಡಲಿರುವುದು ಅವರಿಗೆ ತಿಳಿದಿತ್ತು.</verse>
				<verse number="7">ಅದಕ್ಕೆ ಫಿಲಿಪ್ಪನು, “ಇನ್ನೂರು ದಿನಾರಿ ನಾಣ್ಯಗಳನ್ನು ಕೊಟ್ಟು ರೊಟ್ಟಿಯನ್ನು ತಂದರೂ ಆಳಿಗೊಂದು ತುಂಡೂ ಬಾರದು,” ಎಂದನು.</verse>
				<verse number="8">ಆಗ ಶಿಷ್ಯರಲ್ಲಿ ಒಬ್ಬನು, ಅಂದರೆ ಸಿಮೋನ್ ಪೇತ್ರನ ಸಹೋದರನಾದ ಅಂದ್ರೆಯನು,</verse>
				<verse number="9">“ಇಲ್ಲಿ ಒಬ್ಬ ಹುಡುಗನ ಬಳಿ ಜವೆಗೋದಿಯ ಐದು ರೊಟ್ಟಿಗಳೂ ಎರಡು ಮೀನುಗಳೂ ಇವೆ. ಆದರೆ ಈ ಜನಸಮೂಹಕ್ಕೆ ಇವೆಲ್ಲಿ ಸಾಕಾಗುತ್ತದೆ?” ಎಂದನು.</verse>
				<verse number="10">ಯೇಸು, “ಜನರನ್ನು ಊಟಕ್ಕೆ ಕೂರಿಸಿರಿ,” ಎಂದರು. ಅಲ್ಲಿ ಹುಲುಸಾಗಿದ್ದ ಹುಲ್ಲಿನ ಮೇಲೆ ಜನರು ಕುಳಿತುಕೊಂಡರು. ಗಂಡಸರ ಸಂಖ್ಯೆಯೇ ಐದುಸಾವಿರದಷ್ಟಿತ್ತು.</verse>
				<verse number="11">ಯೇಸು, ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರವನ್ನು ಸಲ್ಲಿಸಿ, ಕುಳಿತಿದ್ದ ಜನರಿಗೆ ಅವುಗಳನ್ನು ಹಂಚಿದರು. ಹಾಗೆಯೇ ಮೀನುಗಳನ್ನೂ ಹಂಚಿಕೊಟ್ಟರು. ಎಲ್ಲರೂ ತಮಗೆ ಬೇಕಾದಷ್ಟು ತಿಂದರು.</verse>
				<verse number="12">ಅವರೆಲ್ಲರೂ ತಿಂದು ತೃಪ್ತರಾದ ಮೇಲೆ ಯೇಸು, “ತಿಂದುಳಿದ ತುಂಡುಗಳನ್ನೆಲ್ಲಾ ಒಟ್ಟುಗೂಡಿಸಿರಿ; ಒಂದು ತುಂಡೂ ಹಾಳಾಗಬಾರದು,” ಎಂದು ತಮ್ಮ ಶಿಷ್ಯರಿಗೆ ಹೇಳಿದರು.</verse>
				<verse number="13">ತಿಂದುಳಿದ ಆ ಐದು ರೊಟ್ಟಿಗಳ ತುಂಡುಗಳನ್ನು ಒಟ್ಟುಗೂಡಿಸಲು ಅವು ಹನ್ನೆರಡು ಬುಟ್ಟಿಗಳ ತುಂಬಾ ಆದವು.</verse>
				<verse number="14">ಯೇಸು ಮಾಡಿದ ಈ ಸೂಚಕಕಾರ್ಯಗಳನ್ನು ಕಂಡ ಜನರು, “ಲೋಕಕ್ಕೆ ಬರಬೇಕಾಗಿದ್ದ ಪ್ರವಾದಿ ನಿಜವಾಗಿಯೂ ಇವರೇ,” ಎಂದು ಹೇಳತೊಡಗಿದ್ದರು.</verse>
				<verse number="15">ಅವರೆಲ್ಲರೂ ಬಂದು ತಮ್ಮನ್ನು ಹಿಡಿದು ಅರಸನನ್ನಾಗಿ ಮಾಡುವ ಯೋಚನೆಯಲ್ಲಿದ್ದಾರೆ ಎಂಬುದನ್ನು ಅರಿತ ಯೇಸು ತಾವೊಬ್ಬರೇ ಬೆಟ್ಟದ ಕಡೆಗೆ ಹೊರಟುಬಿಟ್ಟರು.</verse>
				<verse number="16">ಸಾಯಂಕಾಲವಾದ ಮೇಲೆ ಯೇಸು ಸ್ವಾಮಿಯ ಶಿಷ್ಯರು ಸರೋವರಕ್ಕೆ ಹೋಗಿ</verse>
				<verse number="17">ದೋಣಿಯನ್ನು ಹತ್ತಿ ಕಫೆರ್ನವುಮಿನ ಕಡೆ ಸಾಗಿದರು. ಆಗಲೇ ಕತ್ತಲು ಕವಿದಿತ್ತು. ಯೇಸು ಅವರ ಬಳಿಗೆ ಇನ್ನೂ ಬಂದಿರಲಿಲ್ಲ.</verse>
				<verse number="18">ಅಷ್ಟರಲ್ಲಿ ರಭಸವಾದ ಗಾಳಿ ಬೀಸತೊಡಗಿತು. ಸರೋವರವು ಅಲ್ಲೋಲಕಲ್ಲೋಲವಾಯಿತು.</verse>
				<verse number="19">ಐದು ಆರು ಕಿಲೋಮೀಟರಿನಷ್ಟು ಹುಟ್ಟು ಹಾಕಿರಬೇಕು. ಆಗ ಯೇಸು ನೀರಿನ ಮೇಲೆ ನಡೆಯುತ್ತಾ ದೋಣಿಯನ್ನು ಸಮೀಪಿಸುತ್ತಿರುವುದು ಶಿಷ್ಯರಿಗೆ ಕಾಣಿಸಿತು. ಅದನ್ನು ನೋಡಿ ಅವರು ಹೆದರಿದರು.</verse>
				<verse number="20">ಆಗ ಯೇಸು, “ನಾನೇ, ಇನ್ಯಾರೂ ಅಲ್ಲ; ಅಂಜಬೇಡಿ,” ಎಂದು ಹೇಳಿದರು.</verse>
				<verse number="21">ಶಿಷ್ಯರು ಅವರನ್ನು ದೋಣಿಯೊಳಕ್ಕೆ ಬರಮಾಡಿಕೊಳ್ಳುವುದರಲ್ಲಿದ್ದರು. ಅಷ್ಟರಲ್ಲಿ ದೋಣಿಯು ಸೇರಬೇಕಾಗಿದ್ದ ದಡವನ್ನು ತಲುಪಿತು.</verse>
				<verse number="22">ನೆರೆದಿದ್ದ ಜನರು ಮಾರನೆಯ ದಿನವೂ ಸರೋವರದ ಆಚೆಕಡೆಯೇ ಉಳಿದಿದ್ದರು. ಹಿಂದಿನ ದಿನ ಅಲ್ಲಿ ಒಂದೇ ಒಂದು ದೋಣಿ ಇದ್ದುದನ್ನು ಅವರು ನೋಡಿದ್ದರು. ಯೇಸು ಸ್ವಾಮಿ ಶಿಷ್ಯರೊಡನೆ ದೋಣಿಯನ್ನು ಹತ್ತಲಿಲ್ಲವಾದ್ದರಿಂದ ಶಿಷ್ಯರು ಮಾತ್ರ ಹೊರಟುಹೋಗಿದ್ದಾರೆಂದು ಅವರಿಗೆ ತಿಳಿದಿತ್ತು.</verse>
				<verse number="23">ತಿಬೇರಿಯದಿಂದ ಹೊರಟಿದ್ದ ದೋಣಿಗಳು ಅಷ್ಟು ಹೊತ್ತಿಗೆ ಅಲ್ಲಿಗೆ ಬಂದು ಸೇರಿದವು. ಪ್ರಭುವು ದೇವರಿಗೆ ಸ್ತೋತ್ರವನ್ನು ಸಲ್ಲಿಸಿ, ಜನರಿಗೆ ರೊಟ್ಟಿ ಬಡಿಸಿದ್ದ ಸ್ಥಳ ಅಲ್ಲೇ ಪಕ್ಕದಲ್ಲಿತ್ತು.</verse>
				<verse number="24">ಯೇಸು ಆಗಲಿ, ಅವರ ಶಿಷ್ಯರಾಗಲಿ ಇಲ್ಲದ್ದನ್ನು ನೋಡಿ ಜನರು ಆ ದೋಣಿಗಳನ್ನು ಹತ್ತಿ ಯೇಸುವನ್ನು ಹುಡುಕುತ್ತಾ ಕಫೆರ್ನವುಮಿಗೆ ಬಂದರು.</verse>
				<verse number="25">ಜನರು ಯೇಸುಸ್ವಾಮಿಯನ್ನು ಸರೋವರದ ಆಚೆದಡದಲ್ಲಿ ಕಂಡೊಡನೆ, “ಗುರುದೇವಾ, ತಾವಿಲ್ಲಿಗೆ ಬಂದುದು ಯಾವಾಗ?” ಎಂದು ಕೇಳಿದರು.</verse>
				<verse number="26">ಯೇಸು ಅವರಿಗೆ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನನ್ನನ್ನು ಹುಡುಕಿಕೊಂಡು ಬಂದದ್ದು ಸೂಚಕಕಾರ್ಯಗಳನ್ನು ನೋಡಿ ಗ್ರಹಿಸಿಕೊಂಡಿದ್ದರಿಂದ ಅಲ್ಲ, ಹೊಟ್ಟೆತುಂಬುವಷ್ಟು ರೊಟ್ಟಿ ಸಿಕ್ಕಿದ್ದರಿಂದ.</verse>
				<verse number="27">ಅಳಿದುಹೋಗುವ ಆಹಾರಕ್ಕಾಗಿ ದುಡಿಯಬೇಡಿ; ಉಳಿಯುವ ಮತ್ತು ನಿತ್ಯಜೀವವನ್ನು ಈಯುವ ಆಹಾರಕ್ಕಾಗಿ ದುಡಿಯಿರಿ. ಇಂಥ ಆಹಾರವನ್ನು ನಿಮಗೆ ನೀಡುವವನು ನರಪುತ್ರನೇ. ಏಕೆಂದರೆ, ಪಿತನಾದ ದೇವರು ತಮ್ಮ ಅಧಿಕಾರ ಮುದ್ರೆಯನ್ನು ಆತನ ಮೇಲೆ ಒತ್ತಿದ್ದಾರೆ,” ಎಂದು ಉತ್ತರಕೊಟ್ಟರು.</verse>
				<verse number="28">ಆಗ ಆ ಜನರು, “ದೇವರು ಮೆಚ್ಚುವ ಕಾರ್ಯಗಳನ್ನು ನಾವು ಮಾಡಬೇಕಾದರೆ, ಏನುಮಾಡಬೇಕು?” ಎಂದು ಕೇಳಿದರು.</verse>
				<verse number="29">ಅದಕ್ಕೆ ಯೇಸು, “ದೇವರು ಕಳುಹಿಸಿದಾತನನ್ನು ನೀವು ವಿಶ್ವಾಸಿಸಬೇಕು. ಇದೇ ಅವರು ಮೆಚ್ಚುವ ಕಾರ್ಯ,” ಎಂದರು.</verse>
				<verse number="30">ಅದಕ್ಕೆ ಆ ಜನರು, “ನಾವು ನೋಡಿ ನಿಮ್ಮಲ್ಲಿ ವಿಶ್ವಾಸ ಇಡುವಂತೆ ನೀವು ಏನು ಮಾಡುವಿರಿ? ಯಾವ ಸೂಚಕಕಾರ್ಯವನ್ನು ತೋರಿಸುವಿರಿ?</verse>
				<verse number="31">ನಮ್ಮ ಪೂರ್ವಜರಿಗೆ ಮರುಭೂಮಿಯಲ್ಲಿ ತಿನ್ನಲು ‘ಮನ್ನಾ’ ಸಿಕ್ಕಿತು. ತಿನ್ನಲು ಅವರಿಗೆ ಸ್ವರ್ಗದಿಂದ ರೊಟ್ಟಿ ದೊರಕಿತು, ಎಂದು ಪವಿತ್ರಗ್ರಂಥವೇ ಹೇಳುತ್ತದೆಯಲ್ಲವೇ?’ ಎಂದರು.</verse>
				<verse number="32">ಯೇಸು ಅವರಿಗೆ, “ನಿಮಗೆ ಸತ್ಯವಾಗಿ ಹೇಳುತ್ತೇನೆ; ಸ್ವರ್ಗದಿಂದ ನಿಮಗೆ ರೊಟ್ಟಿಯನ್ನು ಕೊಟ್ಟವನು ಮೋಶೆಯಲ್ಲ; ನಿಮಗೆ ಸ್ವರ್ಗದಿಂದ ನಿಜವಾದ ರೊಟ್ಟಿಯನ್ನು ಕೊಡುವವರು ನನ್ನ ಪಿತನೇ.</verse>
				<verse number="33">ಏಕೆಂದರೆ, ಸ್ವರ್ಗದಿಂದ ಇಳಿದುಬಂದು ಲೋಕಕ್ಕೆ ಸಜ್ಜೀವವನ್ನೀಯುವಾತನೇ ದೇವರು ಕೊಡುವ ರೊಟ್ಟಿ,” ಎಂದು ಹೇಳಿದರು.</verse>
				<verse number="34">ಅದಕ್ಕೆ ಆ ಜನರು, “ಅಂಥಾ ರೊಟ್ಟಿಯನ್ನೇ ನಮಗೆ ಯಾವಾಗಲೂ ಕೊಡಿ,” ಎಂದು ಕೇಳಿದರು.</verse>
				<verse number="35">ಆಗ ಯೇಸು, “ನಾನೇ ಜೀವದಾಯಕ ರೊಟ್ಟಿ, ನನ್ನ ಬಳಿ ಬರುವವನಿಗೆ ಹಸಿವೇ ಇರದು; ನನ್ನಲ್ಲಿ ವಿಶ್ವಾಸವಿಡುವವನಿಗೆ ಎಂದಿಗೂ ದಾಹವಾಗದು.</verse>
				<verse number="36">ಆದರೆ, ನಾನು ನಿಮಗೆ ಹೇಳಿದಂತೆ, ನೀವು ನನ್ನನ್ನು ನೋಡಿಯೂ ವಿಶ್ವಾಸಿಸದೆ ಇದ್ದೀರಿ.</verse>
				<verse number="37">ಪಿತನು ನನಗೆಂದು ಕೊಟ್ಟಿರುವ ಪ್ರತಿಯೊಬ್ಬನೂ ನನ್ನಲ್ಲಿಗೆ ಬರುತ್ತಾನೆ. ನನ್ನಲ್ಲಿಗೆ ಬರುವವನನ್ನು ನಾನೆಂದಿಗೂ ತಳ್ಳಿಬಿಡುವುದಿಲ್ಲ.</verse>
				<verse number="38">ನಾನು ಸ್ವರ್ಗದಿಂದ ಇಳಿದು ಬಂದುದು ನನ್ನ ಇಚ್ಛೆಯಂತೆ ನಡೆಯುವುದಕ್ಕಲ್ಲ, ನನ್ನನ್ನು ಕಳುಹಿಸಿದಾತನ ಚಿತ್ತದಂತೆ ನಡೆಯುವುದಕ್ಕೆ.</verse>
				<verse number="39">ಅವರ ಚಿತ್ತವೇನೆಂದರೆ: ಅವರು ನನಗೆ ಕೊಟ್ಟವರಲ್ಲಿ ಒಬ್ಬನನ್ನೂ ಕಳೆದುಕೊಳ್ಳದೆ ಅಂತಿಮ ದಿನದಂದು ಅವರೆಲ್ಲರನ್ನೂ ನಾನು ಜೀವಕ್ಕೆ ಎಬ್ಬಿಸಬೇಕು.</verse>
				<verse number="40">ಪುತ್ರನನ್ನು ಕಂಡು ಆತನಲ್ಲಿ ವಿಶ್ವಾಸ ಇಡುವ ಪ್ರತಿಯೊಬ್ಬನೂ ನಿತ್ಯಜೀವವನ್ನು ಪಡೆಯಬೇಕೆಂಬುದೇ ನನ್ನ ಪಿತನ ಸಂಕಲ್ಪ. ಅಂಥವನನ್ನು ಅಂತಿಮ ದಿನದಂದು ನಾನು ಜೀವಕ್ಕೆ ಎಬ್ಬಿಸುತ್ತೇನೆ,” ಎಂದು ನುಡಿದರು.</verse>
				<verse number="41">“ಸ್ವರ್ಗದಿಂದ ಇಳಿದುಬಂದ ರೊಟ್ಟಿ ನಾನೇ” ಎಂದು ಯೇಸು ಹೇಳಿದ್ದಕ್ಕೆ ಯೆಹೂದ್ಯರು ಗೊಣಗತೊಡಗಿದರು.</verse>
				<verse number="42">ಅವರು, “ಈತನು ಜೋಸೆಫನ ಮಗನಾದ ಯೇಸು ಅಲ್ಲವೆ? ಈತನ ತಂದೆ ತಾಯಿ ನಮಗೆ ಗೊತ್ತಿಲ್ಲವೆ? ಅಂದಮೇಲೆ, ‘ನಾನು ಸ್ವರ್ಗದಿಂದ ಬಂದಿದ್ದೇನೆ,’ ಎಂದು ಈತನು ಹೇಳುವುದಾದರೂ ಹೇಗೆ?” ಎಂದರು.</verse>
				<verse number="43">ಅದಕ್ಕೆ ಯೇಸು, “ನಿಮ್ಮನಿಮ್ಮೊಳಗೆ ಗೊಣಗುಟ್ಟದಿರಿ.</verse>
				<verse number="44">ನನ್ನನ್ನು ಕಳುಹಿಸಿಕೊಟ್ಟ ಪಿತನು, ನನ್ನತ್ತ ಸೆಳೆಯದ ಹೊರತು, ಯಾರೂ ನನ್ನ ಬಳಿಗೆ ಬಾರರು. ಬಂದವರನ್ನು ನಾನು ಅಂತಿಮ ದಿನದಂದು ಜೀವಕ್ಕೆ ಎಬ್ಬಿಸುತ್ತೇನೆ.</verse>
				<verse number="45">‘ದೇವರಿಂದಲೇ ಅವರೆಲ್ಲರೂ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ಪಿತನಿಗೆ ಕಿವಿಕೊಟ್ಟು ಅವರಿಂದಲೇ ಕಲಿತುಕೊಂಡ ಪ್ರತಿ ಒಬ್ಬನೂ ನನ್ನ ಬಳಿಗೆ ಬರುತ್ತಾನೆ.</verse>
				<verse number="46">ಹಾಗೆಂದ ಮಾತ್ರಕ್ಕೆ ಪಿತನನ್ನು ಯಾರಾದರೂ ಕಣ್ಣಾರೆ ಕಂಡಿದ್ದಾರೆ ಎಂದಲ್ಲ, ದೇವರಿಂದ ಬಂದಿರುವ ಒಬ್ಬನು ಮಾತ್ರ ಪಿತನನ್ನು ಕಂಡಿದ್ದಾನೆ.</verse>
				<verse number="47">ವಿಶ್ವಾಸವುಳ್ಳವನಲ್ಲಿ ನಿತ್ಯಜೀವ ಇದೆಯೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.</verse>
				<verse number="48">ಜೀವದಾಯಕ ರೊಟ್ಟಿ ನಾನೇ.</verse>
				<verse number="49">ನಿಮ್ಮ ಪೂರ್ವಜರು ಮರಳುಗಾಡಿನಲ್ಲಿ, ‘ಮನ್ನಾ’ವನ್ನು ತಿಂದರು; ಆದರೂ ಸಾವಿಗೆ ತುತ್ತಾದರು.</verse>
				<verse number="50">ಸ್ವರ್ಗದಿಂದ ಇಳಿದುಬಂದ ರೊಟ್ಟಿಯಾದರೋ ಹಾಗಲ್ಲ, ಇದನ್ನು ತಿನ್ನುವ ಯಾರಿಗೂ ಸಾವೆಂಬುದು ಇಲ್ಲ.</verse>
				<verse number="51">ನಾನೇ ಸ್ವರ್ಗದಿಂದ ಇಳಿದುಬಂದ ಜೀವಂತ ರೊಟ್ಟಿ. ಈ ರೊಟ್ಟಿಯನ್ನು ತಿಂದವನು ಚಿರಕಾಲ ಬಾಳುತ್ತಾನೆ. ಲೋಕೋದ್ಧಾರಕ್ಕಾಗಿ ನಾನು ಅರ್ಪಿಸುವ ನನ್ನ ಮಾಂಸವೇ ನಾನು ಕೊಡುವ ರೊಟ್ಟಿ,” ಎಂದು ಹೇಳಿದರು.</verse>
				<verse number="52">ಅಷ್ಟಕ್ಕೆ ಆ ಯೆಹೂದ್ಯರಲ್ಲಿ ತೀವ್ರ ವಾಗ್ವಾದ ಉಂಟಾಯಿತು. “ಈತನು ತನ್ನ ಮಾಂಸವನ್ನು ತಿನ್ನಲು ಹೇಗೆ ಕೊಟ್ಟಾನು?” ಎಂದು ಕೇಳತೊಡಗಿದರು.</verse>
				<verse number="53">ಅದಕ್ಕೆ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ನರಪುತ್ರನ ಮಾಂಸವನ್ನು ತಿನ್ನದೆ, ಆತನ ರಕ್ತವನ್ನು ಕುಡಿಯದೆಹೋದರೆ ನಿಮ್ಮಲ್ಲಿ ಜೀವ ಇರುವುದಿಲ್ಲ.</verse>
				<verse number="54">ನನ್ನ ಮಾಂಸವನ್ನು ತಿಂದು ನನ್ನ ರಕ್ತವನ್ನು ಕುಡಿಯುವವನಲ್ಲಿ ನಿತ್ಯಜೀವ ಇರುತ್ತದೆ. ಅಲ್ಲದೆ ಅಂತಿಮ ದಿನದಂದು ನಾನು ಅವನನ್ನು ಜೀವಕ್ಕೆ ಎಬ್ಬಿಸುತ್ತೇನೆ.</verse>
				<verse number="55">ನನ್ನ ಮಾಂಸವೇ ನಿಜವಾದ ಆಹಾರ; ನನ್ನ ರಕ್ತವೇ ನಿಜವಾದ ಪಾನ.</verse>
				<verse number="56">ನನ್ನ ಮಾಂಸವನ್ನು ತಿಂದು, ನನ್ನ ರಕ್ತವನ್ನು ಕುಡಿಯುವವನು ನನ್ನಲ್ಲಿ ನೆಲೆಸಿರುತ್ತಾನೆ. ನಾನು ಅವನಲ್ಲಿ ನೆಲೆಸಿರುತ್ತೇನೆ.</verse>
				<verse number="57">ಜೀವಸ್ವರೂಪಿ ಆದ ಪಿತನು ನನ್ನನ್ನು ಕಳುಹಿಸಿಕೊಟ್ಟಿರುವರು. ನಾನು ಅವರಿಂದಲೇ ಜೀವಿಸುತ್ತೇನೆ. ಅಂತೆಯೇ ನನ್ನನ್ನು ಭುಜಿಸುವವನು ನನ್ನಿಂದಲೇ ಜೀವಿಸುತ್ತಾನೆ.</verse>
				<verse number="58">ಸ್ವರ್ಗದಿಂದ ಇಳಿದುಬಂದ ರೊಟ್ಟಿ ಇದೇ. ನಿಮ್ಮ ಪೂರ್ವಜರು ‘ಮನ್ನಾ’ವನ್ನು ತಿಂದರೂ ಸಾವಿಗೆ ತುತ್ತಾದರು. ಇದು ಹಾಗಲ್ಲ. ಈ ರೊಟ್ಟಿಯನ್ನು ತಿನ್ನುವವನು ಚಿರಕಾಲ ಬಾಳುವನು,” ಎಂದು ಹೇಳಿದರು.</verse>
				<verse number="59">ಕಫೆರ್ನವುಮಿನ ಪ್ರಾರ್ಥನಾಮಂದಿರದಲ್ಲಿ ಯೇಸು ಬೋಧನೆಮಾಡುತ್ತಿದ್ದಾಗ ಆಡಿದ ಮಾತುಗಳಿವು.</verse>
				<verse number="60">ಯೇಸುಸ್ವಾಮಿಯ ಶಿಷ್ಯರಲ್ಲಿ ಹಲವರು, “ಇವು ಕಟುವಾದ ಮಾತುಗಳು, ಇವನ್ನು ಯಾರುತಾನೆ ಕೇಳಿಯಾರು?” ಎಂದು ಮಾತನಾಡಿಕೊಂಡರು.</verse>
				<verse number="61">ಈ ವಿಷಯವಾಗಿ ತಮ್ಮ ಶಿಷ್ಯರು ಗೊಣಗುಟ್ಟುತ್ತಿರುವುದನ್ನು ಯೇಸು ತಾವಾಗಿಯೇ ಅರಿತು, “ಇಷ್ಟುಮಾತ್ರಕ್ಕೆ ನೀವು ಕಂಗೆಡಬೇಕೆ?</verse>
				<verse number="62">ಹಾಗಾದರೆ ನರಪುತ್ರನು ತಾನು ಮೊದಲಿದ್ದ ಸ್ಥಳಕ್ಕೆ ಮರಳಿ ಏರುವುದನ್ನು ನೀವು ಕಂಡಾಗ ಏನನ್ನುವಿರಿ?</verse>
				<verse number="63">ಸಜ್ಜೀವವನ್ನು ಕೊಡುವಂಥಾದ್ದು ದೇವರ ಆತ್ಮವೇ. ನರಮಾಂಸದಿಂದ ಏನೂ ಆಗದು. ನಾನು ನಿಮ್ಮೊಡನೆ ಆಡಿದ ಮಾತುಗಳು ಜೀವದಾಯಕ ದೇವರಾತ್ಮವನ್ನು ತರುತ್ತವೆ.</verse>
				<verse number="64">ಆದರೂ ನಿಮ್ಮಲ್ಲಿ ಕೆಲವರಿಗೆ ವಿಶ್ವಾಸವಿಲ್ಲ,” ಎಂದು ಹೇಳಿದರು. (ವಿಶ್ವಾಸವಿಲ್ಲದವರು ಯಾರು, ತಮ್ಮನ್ನು ಹಿಡಿದುಕೊಡುವ ಗುರುದ್ರೋಹಿ ಯಾರು, ಎಂದು ಯೇಸುವಿಗೆ ಮೊದಲಿನಿಂದಲೂ ತಿಳಿದಿತ್ತು.)</verse>
				<verse number="65">“ ‘ಪಿತನು ಅನುಗ್ರಹಿಸಿದ ಹೊರತು ಯಾರೂ ನನ್ನ ಬಳಿಗೆ ಬರಲಾರರು,’ ಎಂದು ನಾನು ಹೇಳಿದುದು ಇದಕ್ಕಾಗಿಯೇ,” ಎಂದು ಯೇಸು ಮತ್ತೆ ನುಡಿದರು.</verse>
				<verse number="66">ಅಂದಿನಿಂದ ಯೇಸುಸ್ವಾಮಿಯ ಹಿಂಬಾಲಕರಲ್ಲಿ ಹಲವರು ಅವರ ಸಹವಾಸವನ್ನು ಬಿಟ್ಟುಬಿಟ್ಟರು. ಹೋದವರು ಹಿಂದಿರುಗಿ ಬರಲಿಲ್ಲ.</verse>
				<verse number="67">ಆಗ ಯೇಸು ಹನ್ನೆರಡು ಮಂದಿ ಶಿಷ್ಯರಿಗೆ, “ನೀವು ಕೂಡ ಹೋಗಬೇಕೆಂದು ಇದ್ದೀರಾ?’ ಎಂದು ಕೇಳಿದರು.</verse>
				<verse number="68">ಅದಕ್ಕೆ ಸಿಮೋನ ಪೇತ್ರನು, “ಪ್ರಭುವೇ, ನಾವು ಹೋಗುವುದಾದರೂ ಯಾರ ಬಳಿಗೆ? ನಿತ್ಯಜೀವವನ್ನು ಈಯುವ ನುಡಿ ಇರುವುದು ತಮ್ಮಲ್ಲೇ.</verse>
				<verse number="69">ತಾವೇ ದೇವರಿಂದ ಬಂದ ಪರಮಪೂಜ್ಯರು. ಹೌದು, ಇದೇ ನಮ್ಮ ವಿಶ್ವಾಸ ಮತ್ತು ಗ್ರಹಿಕೆ,” ಎಂದು ಹೇಳಿದನು.</verse>
				<verse number="70">ಆಗ ಯೇಸು, “ನಿಮ್ಮಲ್ಲಿ ಹನ್ನೆರಡುಮಂದಿಯನ್ನು ನಾನು ಆಯ್ದುಕೊಂಡೆನಲ್ಲವೆ? ಆದರೂ ನಿಮ್ಮಲ್ಲಿ ಒಬ್ಬನು ಪಿಶಾಚಿಯಾಗಿ ಇದ್ದಾನೆ,” ಎಂದರು.</verse>
				<verse number="71">ಅವರು ಹೀಗೆ ಹೇಳಿದ್ದು ಸಿಮೋನನ ಮಗ ಇಸ್ಕರಿಯೋತಿನ ಯೂದನನ್ನು ಕುರಿತು. ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದ ಇವನೇ ಯೇಸುವನ್ನು ಹಿಡಿದುಕೊಡಲಿದ್ದ ಗುರುದ್ರೋಹಿ.</verse>
			</chapter>
			<chapter number="7">
				<verse number="1">ಇದಾದ ಬಳಿಕ ಯೇಸುಸ್ವಾಮಿ ಗಲಿಲೇಯದಲ್ಲಿ ಸಂಚರಿಸತೊಡಗಿದರು. ಯೆಹೂದ್ಯರು ತಮ್ಮನ್ನು ಕೊಲ್ಲಲು ಹವಣಿಸುತ್ತಿದ್ದುದರಿಂದ ಜುದೇಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.</verse>
				<verse number="2">ಯೆಹೂದ್ಯರ ಪರ್ಣಕುಟೀರಗಳ ಹಬ್ಬವು ಹತ್ತಿರವಾಗುತ್ತಿತ್ತು. ಯೇಸುವಿನ ಸೋದರರು,</verse>
				<verse number="3">“ನೀನು ಇಲ್ಲಿಂದ ಜುದೇಯಕ್ಕೆ ಹೋಗು. ಅಲ್ಲಿ ನೀನು ಮಾಡುವುದನ್ನೆಲ್ಲಾ ನಿನ್ನ ಅನುಯಾಯಿಗಳು ನೋಡಲಿ.</verse>
				<verse number="4">ಪ್ರಖ್ಯಾತನಾಗಬೇಕೆಂದಿರುವ ಯಾರೂ ತನ್ನ ಕಾರ್ಯಗಳನ್ನು ಮರೆಯಲ್ಲಿ ಮಾಡುವುದಿಲ್ಲ, ಇವನ್ನೆಲ್ಲಾ ನೀನು ಮಾಡುವುದಾದರೆ ಲೋಕಕ್ಕೆ ಪ್ರಕಟವಾಗುವಂತೆ ಮಾಡಬೇಕು,” ಎಂದು ಯೇಸುವಿಗೆ ಹೇಳಿದರು.</verse>
				<verse number="5">ಅವರ ಸೋದರರಿಗೆ ಕೂಡ ಅವರಲ್ಲಿ ವಿಶ್ವಾಸವಿರಲಿಲ್ಲ.</verse>
				<verse number="6">ಅದಕ್ಕೆ ಯೇಸು, “ನನಗೆ ಸೂಕ್ತ ಸಮಯ ಇನ್ನೂ ಬಂದಿಲ್ಲ, ನಿಮಗಾದರೋ ಎಲ್ಲಾ ಸಮಯವೂ ಒಂದೇ.</verse>
				<verse number="7">ಲೋಕಕ್ಕೆ ನಿಮ್ಮ ಮೇಲೆ ಹಗೆಯಿಲ್ಲ. ಅದಕ್ಕೆ ಹಗೆಯಿರುವುದು ನನ್ನ ಮೇಲೆ. ಏಕೆಂದರೆ, ಅದರ ವರ್ತನೆ ಕೆಟ್ಟದೆಂದು ನಾನು ಯಥಾರ್ಥವಾಗಿ ಹೇಳುತ್ತಾ ಇದ್ದೇನೆ.</verse>
				<verse number="8">ಹಬ್ಬಕ್ಕೆ ನೀವೇ ಹೋಗಿರಿ, ನನಗೆ ಸಮಯವು ಇನ್ನೂ ಬಂದಿಲ್ಲವಾದ ಕಾರಣ ನಾನು ಹಬ್ಬಕ್ಕೆ ಈಗ ಹೋಗುವುದಿಲ್ಲ,” ಎಂದು ಹೇಳಿ</verse>
				<verse number="9">ಯೇಸು ಗಲಿಲೇಯದಲ್ಲೇ ಉಳಿದುಕೊಂಡರು.</verse>
				<verse number="10">ಯೇಸುಸ್ವಾಮಿಯ ಸೋದರರು ಹಬ್ಬಕ್ಕೆಹೋದರು. ಯೇಸುವೂ ಅಲ್ಲಿಗೆ ಹೋದರು. ಬಹಿರಂಗವಾಗಿ ಅಲ್ಲ, ಗುಟ್ಟಾಗಿ.</verse>
				<verse number="11">ಹಬ್ಬದ ಸಮಯದಲ್ಲಿ ಯೆಹೂದ್ಯರು ಯೇಸು ಎಲ್ಲಿದ್ದಾನೆಂದು ಹುಡುಕುತ್ತಿದ್ದರು. ಯೇಸುವನ್ನು ಕುರಿತು ಜನರ ಗುಂಪು ಗುಜುಗುಜು ಮಾತನಾಡುತ್ತಿತ್ತು.</verse>
				<verse number="12">‘ಆತ ಒಳ್ಳೆಯ ವ್ಯಕ್ತಿ’ ಎಂದು ಕೆಲವರು ಹೇಳಿದರೆ, ‘ಇಲ್ಲ, ಆತನು ಜನರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾನೆ,’ ಎನ್ನುತ್ತಿದ್ದರು ಇತರರು.</verse>
				<verse number="13">ಯೆಹೂದ್ಯರಿಗೆ ಅಂಜಿ ಅವರಾರೂ ಬಹಿರಂಗವಾಗಿ ಮಾತನಾಡುತ್ತಿರಲಿಲ್ಲ.</verse>
				<verse number="14">ಹಬ್ಬವು ಅರ್ಧಕ್ಕೆ ಅರ್ಧ ಮುಗಿಯತು. ಆಗ ಯೇಸು ಮಹಾದೇವಾಲಯಕ್ಕೆ ಹೋಗಿ ಬೋಧನೆ ಮಾಡತೊಡಗಿದರು.</verse>
				<verse number="15">ಅದನ್ನು ಕೇಳಿ ಯೆಹೂದ್ಯ ಅಧಿಕಾರಿಗಳು ಬೆರಗಾದರು. “ಕಲಿಯದಿದ್ದರೂ ಈ ಮನುಷ್ಯನಿಗೆ ಇಷ್ಟೆಲ್ಲಾ ಪಾಂಡಿತ್ಯ ಎಲ್ಲಿಂದ ಬಂದಿತು?” ಎಂದು ವಿಚಾರಿಸತೊಡಗಿದರು.</verse>
				<verse number="16">ಆಗ ಯೇಸು ಸ್ವಾಮಿ, “ನಾನು ಮಾಡುವ ಬೋಧನೆ ನನ್ನದಲ್ಲ; ನನ್ನನ್ನು ಕಳುಹಿಸಿದಾತನದು.</verse>
				<verse number="17">ದೇವರ ಚಿತ್ತದಂತೆ ನಡೆಯಲು ಮನಸ್ಸು ಉಳ್ಳವನಿಗೆ, ನಾನು ಬೋಧಿಸುವುದು ದೇವರಿಂದ ಬಂದುದೋ ಅಥವಾ ನನ್ನ ಸ್ವಂತ ಕಲ್ಪನೆಯೋ ಎಂಬುದು ತಿಳಿಯುತ್ತದೆ.</verse>
				<verse number="18">ಸ್ವಂತ ಕಲ್ಪನೆಯಿಂದ ಮಾತನಾಡುವವನು ತನ್ನ ಸ್ವಪ್ರತಿಷ್ಠೆಯನ್ನು ಬಯಸುತ್ತಾನೆ. ತನ್ನನ್ನು ಕಳುಹಿಸಿದಾತನ ಪ್ರತಿಷ್ಠೆಯನ್ನು ಬಯಸುವವನು ಪ್ರಾಮಾಣಿಕನು. ಕಪಟವೆಂಬುದು ಅವನಲ್ಲಿ ಇರದು.</verse>
				<verse number="19">ಮೋಶೆ ಕೊಟ್ಟ ಧರ್ಮಶಾಸ್ತ್ರ ನಿಮಗಿದೆಯಲ್ಲವೇ, ಆದರೂ ಅದಕ್ಕೆ ಸರಿಯಾಗಿ ನಡೆಯುವವರಾರೂ ನಿಮ್ಮಲ್ಲಿ ಇಲ್ಲ. ನನ್ನನ್ನು ಕೊಲ್ಲಬೇಕೆಂದು ನೀವು ಹವಣಿಸುವುದೇಕೆ?” ಎಂದರು.</verse>
				<verse number="20">ಅದಕ್ಕೆ ಆ ಜನರು, “ನಿನಗೆ ದೆವ್ವ ಹಿಡಿದಿರಬೇಕು; ನಿನ್ನನ್ನು ಕೊಲ್ಲಲು ಹವಣಿಸುತ್ತಿರುವವರಾದರು ಯಾರು?” ಎಂದರು.</verse>
				<verse number="21">ಯೇಸು ಅವರಿಗೆ, “ಸಬ್ಬತ್ ದಿನ ನಾನು ಮಾಡಿದ್ದು ಒಂದು ಸೂಚಕಕಾರ್ಯ ಮಾತ್ರ. ಅಷ್ಟಕ್ಕೇ ನೀವೆಲ್ಲರೂ ಕಂಗಾಲಾಗಿದ್ದೀರಿ.</verse>
				<verse number="22">ಸುನ್ನತಿಯನ್ನು ಆಚರಿಸಬೇಕೆಂದು ನಿಯಮಿಸಿದವನು ಮೋಶೆ. (ವಾಸ್ತವವಾಗಿ ಅದು ಮೋಶೆಯ ಕಾಲದಿಂದಲ್ಲ, ಪೂರ್ವಜರ ಕಾಲದಿಂದಲೂ ರೂಢಿಯಲ್ಲಿತ್ತು). ಸಬ್ಬತ್ ದಿನದಲ್ಲಿಯೂ ನೀವು ಸುನ್ನತಿಯನ್ನು ಮಾಡುವುದುಂಟು.</verse>
				<verse number="23">ಮೋಶೆಯ ನಿಯಮವನ್ನು ಉಲ್ಲಂಘಿಸದೆ ನೀವು ಸಬ್ಬತ್ ದಿನದಲ್ಲಿ ಒಬ್ಬನಿಗೆ ಸುನ್ನತಿ ಮಾಡಬಹುದಾದರೆ ಅದೇ ಸಬ್ಬತ್ ದಿನದಲ್ಲಿ ನಾನು ಒಬ್ಬ ಮನುಷ್ಯನನ್ನು ಸಂಪೂರ್ಣ ಸ್ವಸ್ಥಪಡಿಸಿದ್ದಕ್ಕೆ ನೀವು ಸಿಟ್ಟಾಗಬೇಕೆ?</verse>
				<verse number="24">ಬರೀ ತೋರಿಕೆಯಿಂದ ತೀರ್ಪುಕೊಡುವುದು ಸಲ್ಲದು; ನಿಮ್ಮ ತೀರ್ಪು ನ್ಯಾಯಬದ್ಧವಾಗಿರಬೇಕು,” ಎಂದು ಹೇಳಿದರು.</verse>
				<verse number="25">ಜೆರುಸಲೇಮಿನ ಕೆಲವುಮಂದಿ ಇದನ್ನು ಕೇಳಿ, “ಅವರು ಕೊಲ್ಲಬೇಕೆಂದು ಹವಣಿಸುತ್ತಾ ಇರುವುದು ಈತನನ್ನೇ ಅಲ್ಲವೆ?</verse>
				<verse number="26">ಇಗೋ, ಈತ ಬಹಿರಂಗವಾಗಿ ಮಾತನಾಡುತ್ತಿದ್ದಾನೆ. ಆದರೂ ಈತನಿಗೆ ವಿರುದ್ಧವಾಗಿ ಅವರಾರೂ ಮಾತೆತ್ತುತ್ತಿಲ್ಲ! ಈತನೇ ಲೋಕೋದ್ಧಾರಕನೆಂದು ಆ ಮುಖಂಡರಿಗೆ ಹೊಳೆದಿರಬಹುದೆ?</verse>
				<verse number="27">ಲೋಕೋದ್ಧಾರಕನು ಕಾಣಿಸಿಕೊಳ್ಳುವಾಗ ಆತನು ಎಲ್ಲಿಂದ ಬಂದನೆಂದು ಯಾರಿಗೂ ತಿಳಿದಿರುವುದಿಲ್ಲ. ಆದರೆ ಈತನು ಎಲ್ಲಿಂದ ಬಂದವರೆಂದು ನಮ್ಮೆಲ್ಲರಿಗೂ ತಿಳಿದಿದೆಯಲ್ಲಾ!” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.</verse>
				<verse number="28">ಆದುದರಿಂದ ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸು ಸ್ವಾಮಿ ಆಗ ಗಟ್ಟಿಯಾಗಿ ಇಂತೆಂದರು: “ನಾನು ಯಾರೆಂದು, ಎಲ್ಲಿಂದ ಬಂದವನೆಂದು ನೀವು ಬಲ್ಲಿರೋ? ನಾನು ನನ್ನಷ್ಟಕ್ಕೇ ಬಂದವನಲ್ಲ: ನನ್ನನ್ನು ಕಳುಹಿಸಿದಾತನು ಸತ್ಯಸ್ವರೂಪಿ. ಆತನನ್ನು ನೀವು ಅರಿತಿಲ್ಲ.</verse>
				<verse number="29">ನಾನಾದರೋ ಆತನನ್ನು ಅರಿತಿದ್ದೇನೆ. ಏಕೆಂದರೆ, ನಾನು ಬಂದುದು ಆತನಿಂದಲೇ. ಆತನೇ ನನ್ನನ್ನು ಕಳುಹಿಸಿದ್ದು,”</verse>
				<verse number="30">ಇದನ್ನು ಕೇಳಿದ ಯೆಹೂದ್ಯರು ಯೇಸುವನ್ನು ಹಿಡಿದು ಬಂಧಿಸಲು ಪ್ರಯತ್ನಿಸಿದರು. ಆದರೆ ಅವರ ಗಳಿಗೆ ಇನ್ನೂ ಬಾರದೆ ಇದ್ದ ಕಾರಣ ಯಾರೂ ಅವರ ಮೇಲೆ ಕೈಹಾಕಲಿಲ್ಲ.</verse>
				<verse number="31">ಅಲ್ಲಿ ನೆರೆದಿದ್ದ ಹಲವರಿಗೆ ಯೇಸುವಿನಲ್ಲಿ ನಂಬಿಕೆ ಹುಟ್ಟಿತು. “ಲೋಕೋದ್ಧಾರಕ ಬಂದಾಗ ಈತನು ಮಾಡಿದ್ದಕ್ಕೂ ಮಿಗಿಲಾದ ಸೂಚಕಕಾರ್ಯಗಳನ್ನು ಮಾಡಿಯಾನೆ?” ಎಂದುಕೊಂಡರು.</verse>
				<verse number="32">ಯೇಸು ಸ್ವಾಮಿಯನ್ನು ಕುರಿತು ಜನರು ಹೀಗೆ ಆಡುತ್ತಿದ್ದ ಗುಸುಗುಸು ಮಾತು ಫರಿಸಾಯರ ಕಿವಿಗೆ ಮುಟ್ಟಿತು. ಅವರೂ ಮುಖ್ಯಯಾಜಕರೂ ಯೇಸುವನ್ನು ಬಂಧಿಸಲು ಕಾಲಾಳುಗಳನ್ನು ಕಳುಹಿಸಿದರು.</verse>
				<verse number="33">ಆಗ ಯೇಸು, “ಇನ್ನು ತುಸುಕಾಲ ಮಾತ್ರ ನಾನು ನಿಮ್ಮೊಡನೆ ಇರುತ್ತೇನೆ. ಅನಂತರ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟುಹೋಗುತ್ತೇನೆ.</verse>
				<verse number="34">ಆಗ ನೀವು ನನ್ನನ್ನು ಹುಡುಕುವಿರಿ. ಆದರೆ ನಾನು ನಿಮಗೆ ಕಾಣಸಿಗುವುದಿಲ್ಲ. ನಾನು ಇರುವಲ್ಲಿಗೆ ನೀವು ಬರುವಂತೆಯೂ ಇಲ್ಲ,” ಎಂದು ಹೇಳಿದರು.</verse>
				<verse number="35">ಯೆಹೂದ್ಯ ಅಧಿಕಾರಿಗಳು, “ನಮಗೆ ಕಾಣಸಿಗದ ಹಾಗೆ ಇವನು ಎಲ್ಲಿ ಹೋಗಲಿದ್ದಾನೆ? ಗ್ರೀಕರ ನಡುವೆ ಚದರಿಹೋಗಿರುವ ಯೆಹೂದ್ಯರಲ್ಲಿಗೆ ಹೋಗಿ ಅವರಿಗೆ ಬೋಧಿಸುವನೋ?</verse>
				<verse number="36">‘ನನ್ನನ್ನು ಅರಸುವಿರಿ, ಆದರೆ ನಾನು ನಿಮಗೆ ಕಾಣಸಿಗುವುದಿಲ್ಲ. ನಾನಿರುವಲ್ಲಿಗೆ ನೀವು ಬರುವಂತಿಲ್ಲ’ ಎಂದು ಇವನು ಹೇಳುವುದರ ಅರ್ಥ ಏನಿರಬಹುದು?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.</verse>
				<verse number="37">ಹಬ್ಬದ ಕೊನೆಯ ದಿನ ಮಹಾದಿನ ಆಗಿತ್ತು. ಅಂದು ಯೇಸು ಸ್ವಾಮಿ ಅಲ್ಲಿ ನಿಂತುಕೊಂಡು, “ಬಾಯಾರಿದವನು ನನ್ನ ಬಳಿಗೆ ಬಂದು ಕುಡಿಯಲಿ.</verse>
				<verse number="38">ಪವಿತ್ರಗ್ರಂಥದಲ್ಲಿ ಹೇಳಿರುವಂತೆ, ‘ನನ್ನಲ್ಲಿ ವಿಶ್ವಾಸವಿಡುವವನ ಹೃದಯದಿಂದ ಜೀವಜಲ ಹೊನಲುಹೊನಲಾಗಿ ಹರಿಯುವುದು,’ “ ಎಂದು ಕೂಗಿ ಹೇಳಿದರು.</verse>
				<verse number="39">ತಮ್ಮಲ್ಲಿ ವಿಶ್ವಾಸವಿಡುವವರು ಪಡೆಯಲಿದ್ದ ಪವಿತ್ರಾತ್ಮರನ್ನು ಕುರಿತೇ ಯೇಸು ಹೀಗೆ ಹೇಳಿದ್ದು. ಪವಿತ್ರ ಆತ್ಮ ಇನ್ನೂ ಬಂದಿರಲಿಲ್ಲ. ಏಕೆಂದರೆ, ಯೇಸು ಇನ್ನೂ ಮೇಲೇರಿ ಮಹಿಮೆಯನ್ನು ಪಡೆದಿರಲಿಲ್ಲ.</verse>
				<verse number="40">ಇದನ್ನು ಕೇಳಿ ನೆರೆದಿದ್ದವರಲ್ಲಿ ಕೆಲವರು, “ಬರಬೇಕಾಗಿದ್ದ ಪ್ರವಾದಿ ಈತನೇ ಸರಿ,” ಎಂದರು.</verse>
				<verse number="41">ಇನ್ನೂ ಕೆಲವರು, “ಈತನೇ ಲೋಕೋದ್ಧಾರಕ,” ಎಂದರು. ಮತ್ತೆ ಕೆಲವರು, “ಲೋಕೋದ್ಧಾರಕ ಗಲಿಲೇಯದಿಂದ ಬರುವುದುಂಟೇ?</verse>
				<verse number="42">‘ಆತ ದಾವೀದ ವಂಶಜನು; ಆತನು ಹುಟ್ಟುವುದು ದಾವೀದನ ಊರಾದ ಬೆತ್ಲೆಹೇಮಿನಲ್ಲಿ’ ಎಂದು ಪವಿತ್ರಗ್ರಂಥವೇ ಹೇಳಿದೆಯಲ್ಲವೆ?” ಎಂದು ವಾದಿಸಿದರು.</verse>
				<verse number="43">ಹೀಗೆ ಯೇಸುವನ್ನು ಕುರಿತು ಜನರಲ್ಲಿ ಭಿನ್ನಾಭಿಪ್ರಾಯ ಉಂಟಾಯಿತು.</verse>
				<verse number="44">ಕೆಲವರಿಗಂತೂ ಯೇಸುವನ್ನು ಹಿಡಿದು ಬಂಧಿಸಬೇಕೆನಿಸಿತು, ಆದರೆ ಯಾರೂ ಅವರ ಮೇಲೆ ಕೈಹಾಕಲಿಲ್ಲ.</verse>
				<verse number="45">ಕಾವಲಾಳುಗಳು ಹಿಂದಿರುಗಿದಾಗ, ಮುಖ್ಯಯಾಜಕರು ಮತ್ತು ಫರಿಸಾಯರು, “ಅವನನ್ನೇಕೆ ನೀವು ಹಿಡಿದು ತರಲಿಲ್ಲ?” ಎಂದು ಕೇಳಿದರು.</verse>
				<verse number="46">ಅವರು, “ಆತನು ಮಾತನಾಡುವಂತೆ ಯಾರೂ ಎಂದೂ ಮಾತನಾಡಿದ್ದಿಲ್ಲ,” ಎಂದು ಉತ್ತರಿಸಿದರು.</verse>
				<verse number="47">ಅದಕ್ಕೆ ಫರಿಸಾಯರು, “ಏನು, ನೀವು ಕೂಡ ಅವನಿಗೆ ಮರುಳಾಗಿಬಿಟ್ಟಿರೋ?</verse>
				<verse number="48">ನಮ್ಮ ಮುಖಂಡರಲ್ಲಾಗಲಿ, ಫರಿಸಾಯರಲ್ಲಾಗಲಿ, ಯಾರಾದರೂ ಅವನನ್ನು ನಂಬಿದ್ದುಂಟೆ?</verse>
				<verse number="49">ಧರ್ಮಶಾಸ್ತ್ರದ ಗಂಧವೂ ಇಲ್ಲದ ಜನಜಂಗುಳಿ ಶಾಪಗ್ರಸ್ತವಾಗಿದೆ,” ಎಂದರು.</verse>
				<verse number="50">ಅಲ್ಲಿದ್ದ ಫರಿಸಾಯರಲ್ಲಿ ನಿಕೊದೇಮನು ಒಬ್ಬನು. ಹಿಂದೆ ಯೇಸುವನ್ನು ಕಾಣಲು ಬಂದಿದ್ದವನು ಈತನೇ.</verse>
				<verse number="51">ಈತನು ಅವರಿಗೆ, “ಒಬ್ಬ ವ್ಯಕ್ತಿಯ ಹೇಳಿಕೆಯನ್ನು ಕೇಳದೆ, ಆತನು ಮಾಡಿರುವುದನ್ನು ಕಂಡುಕೊಳ್ಳದೆ, ಆತನನ್ನು ದೋಷಿಯೆಂದು ನಿರ್ಧರಿಸುವುದು ಶಾಸ್ತ್ರಸಮ್ಮತವೇ?” ಎಂದು ಕೇಳಿದನು.</verse>
				<verse number="52">ಅದಕ್ಕೆ ಅವರು, “ನೀನೂ ಗಲಿಲೇಯದವನೋ? ಪವಿತ್ರಗ್ರಂಥವನ್ನು ಓದಿನೋಡು; ಗಲಿಲೇಯದಿಂದ ಯಾವ ಪ್ರವಾದಿಯೂ ತಲೆಯೆತ್ತುವುದಿಲ್ಲ, ಎಂಬುದು ನಿನಗೇ ಗೊತ್ತಾಗುತ್ತದೆ,” ಎಂದು ಮರುತ್ತರಕೊಟ್ಟರು.</verse>
				<verse number="53">ಬಳಿಕ ಎಲ್ಲರೂ ತಮ್ಮತಮ್ಮ ಮನೆಗಳಿಗೆ ತೆರಳಿದರು.</verse>
			</chapter>
			<chapter number="8">
				<verse number="1">(ಯೇಸು ಸ್ವಾಮಿ ಓಲಿವ್ ಗುಡ್ಡಕ್ಕೆ ಹೋದರು.</verse>
				<verse number="2">ಮರುದಿನ ಮುಂಜಾನೆ ಅವರು ಮತ್ತೆ ಮಹಾದೇವಾಲಯಕ್ಕೆ ಬಂದರು. ಜನರು ಸುತ್ತಲೂ ಬಂದು ನೆರೆಯಲು ಯೇಸು ಕುಳಿತುಕೊಂಡು ಬೋಧಿಸತೊಡಗಿದರು.</verse>
				<verse number="3">ಆಗ ಧರ್ಮಶಾಸ್ತ್ರಿಗಳೂ ಫರಿಸಾಯರೂ ಒಬ್ಬ ಹೆಂಗಸನ್ನು ಅಲ್ಲಿಗೆ ಕರೆತಂದರು; ಅವಳು ವ್ಯಭಿಚಾರಮಾಡುತ್ತಿದ್ದಾಗಲೇ ಸಿಕ್ಕಿಬಿದ್ದಿದ್ದಳು.</verse>
				<verse number="4">ಅವಳನ್ನು ಎಲ್ಲರ ಮುಂದೆ ನಿಲ್ಲಿಸಿ, “ಬೋಧಕರೇ, ಈ ಹೆಂಗಸು ವ್ಯಭಿಚಾರಮಾಡುತ್ತಿದ್ದಾಗಲೇ ಸಿಕ್ಕಿಬಿದ್ದಳು.</verse>
				<verse number="5">ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯೇ ಧರ್ಮಶಾಸ್ತ್ರದಲ್ಲಿ ವಿಧಿಸಿದ್ದಾನೆ. ಈ ಕುರಿತು ನಿಮ್ಮ ಅಭಿಪ್ರಾಯವೇನು?” ಎಂದು ಪ್ರಶ್ನಿಸಿದರು.</verse>
				<verse number="6">ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿ ಅವರ ಮೇಲೆ ತಪ್ಪುಹೊರಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು. ಯೇಸುವಾದರೋ ಬಗ್ಗಿಕೊಂಡು ಬೆರಳಿನಿಂದ ಮರಳ ಮೇಲೆ ಏನನ್ನೋ ಬರೆಯುತ್ತಾ ಕುಳಿತರು. ಬಂದವರಾದರೋ ಮೇಲಿಂದ ಮೇಲೆ ಪ್ರಶ್ನೆಹಾಕುತ್ತಲೇ ಇದ್ದರು.</verse>
				<verse number="7">ಆಗ ಯೇಸು ನೆಟ್ಟಗೆ ಕುಳಿತು, “ನಿಮ್ಮಲ್ಲಿ ಪಾಪಮಾಡದವನು ಯಾವನೋ ಅಂಥವನು ಇವಳ ಮೇಲೆ ಮೊದಲನೆಯ ಕಲ್ಲು ಬೀರಲಿ,” ಎಂದು ಹೇಳಿ,</verse>
				<verse number="8">ಪುನಃ ಬಗ್ಗಿಕೊಂಡು ನೆಲದ ಮೇಲೆ ಬರೆಯತೊಡಗಿದರು.</verse>
				<verse number="9">ಇದನ್ನು ಕೇಳಿದ್ದೇ ಹಿರಿಯರಿಂದ ಹಿಡಿದು ಅವರೆಲ್ಲರೂ ಒಬ್ಬೊಬ್ಬರಾಗಿ ಅಲ್ಲಿಂದ ಕಾಲುಕಿತ್ತರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ನಿಂತುಕೊಂಡಿದ್ದ ಆ ಹೆಂಗಸು.</verse>
				<verse number="10">ಆಗ ಯೇಸು ತಲೆಯೆತ್ತಿ, “ತಾಯೀ, ಅವರೆಲ್ಲಾ ಎಲ್ಲಿ? ನಿನಗೆ ಯಾರೂ ಶಿಕ್ಷೆ ವಿಧಿಸಲಿಲ್ಲವೆ?” ಎಂದು ಕೇಳಿದರು.</verse>
				<verse number="11">ಅವಳು, “ಇಲ್ಲ, ಸ್ವಾಮೀ,” ಎಂದಳು. ಯೇಸು ಅವಳಿಗೆ, “ನಾನೂ ನಿನಗೆ ಶಿಕ್ಷೆ ವಿಧಿಸುವುದಿಲ್ಲ, ಹೋಗು; ಇನ್ನು ಮೇಲೆ ಪಾಪಮಾಡಬೇಡ,” ಎಂದರು).</verse>
				<verse number="12">ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”</verse>
				<verse number="13">ಅದಕ್ಕೆ ಫರಿಸಾಯರು, “ಈಗ ನೀನು ನಿನ್ನ ಪರವಾಗಿಯೇ ಸಾಕ್ಷಿ ನೀಡುತ್ತಿರುವೆ. ಅಂಥ ಸಾಕ್ಷಿಗೆ ಬೆಲೆಯಿಲ್ಲ,” ಎಂದರು.</verse>
				<verse number="14">ಅದಕ್ಕೆ ಯೇಸು, ‘ನಾನೇ ನನ್ನ ಪರವಾಗಿ ಸಾಕ್ಷಿ ನೀಡಿದರೂ ನನ್ನ ಸಾಕ್ಷಿಗೆ ಬೆಲೆಯುಂಟು. ಏಕೆಂದರೆ, ನಾನು ಎಲ್ಲಿಂದ ಬಂದೆ, ಎಲ್ಲಿಗೆ ಹೋಗುತ್ತಿರುವೆ, ಎಂದು ನನಗೆ ತಿಳಿದಿದೆ. ನಿಮಗಾದರೋ ನಾನು ‘ಬಂದುದು ಎಲ್ಲಿಂದ, ಹೋಗುವುದು ಎಲ್ಲಿಗೆ’ ಎಂದು ತಿಳಿಯದು.</verse>
				<verse number="15">ನೀವು ತೀರ್ಪುಕೊಡುವುದು ಲೋಕದ ದೃಷ್ಟಿಯಿಂದ, ನಾನಾದರೋ ಯಾರ ಬಗ್ಗೆಯೂ ತೀರ್ಪುಕೊಡಲು ಹೋಗುವುದಿಲ್ಲ.</verse>
				<verse number="16">ನಾನು ತೀರ್ಪುಕೊಟ್ಟರೂ ಅದು ಯಥಾರ್ಥವಾದುದು. ಕಾರಣ, ತೀರ್ಪುಕೊಡುವವನು ನಾನೊಬ್ಬನೇ ಅಲ್ಲ; ನನ್ನನ್ನು ಕಳುಹಿಸಿದ ಪಿತ ಸಹ ನನ್ನೊಡನೆ ಇದ್ದಾರೆ.</verse>
				<verse number="17">ಇಬ್ಬರ ಸಾಕ್ಷ್ಯ ಒಂದೇ ಆಗಿದ್ದರೆ ಅದು ಸತ್ಯವೆಂದು ನಿಮ್ಮ ಧರ್ಮಶಾಸ್ತ್ರದಲ್ಲಿಯೇ ಬರೆದಿದೆ.</verse>
				<verse number="18">ನಾನು ನನ್ನ ಪರವಾಗಿ ಸಾಕ್ಷಿ ಹೇಳುತ್ತೇನೆ; ನನ್ನನ್ನು ಕಳುಹಿಸಿದ ಪಿತ ಸಹ ನನ್ನ ಪರವಾಗಿ ಸಾಕ್ಷಿ ಹೇಳುತ್ತಾರೆ,” ಎಂದು ನುಡಿದರು.</verse>
				<verse number="19">ಅದಕ್ಕೆ ಅವರು, “ನಿನ್ನ ಪಿತನೆಲ್ಲಿ?” ಎಂದು ಕೇಳಿದರು. ಯೇಸು, “ನೀವು ನನ್ನನ್ನು ಅರಿತಿಲ್ಲ, ನನ್ನ ಪಿತನನ್ನೂ ಅರಿತಿಲ್ಲ. ನೀವು ನನ್ನನ್ನು ಅರಿತಿದ್ದರೆ, ನನ್ನ ಪಿತನನ್ನೂ ಅರಿಯುತ್ತಿದ್ದಿರಿ,” ಎಂದರು.</verse>
				<verse number="20">ಮಹಾದೇವಾಲಯದೊಳಗೆ ಕಾಣಿಕೆ ಪೆಟ್ಟಿಗೆಗಳನ್ನಿಟ್ಟ ಕೋಣೆಯಲ್ಲಿ ಯೇಸು ಮಾತನಾಡುತ್ತಾ ಹೇಳಿದ ಮಾತುಗಳಿವು. ಅವರ ಗಳಿಗೆ ಇನ್ನೂ ಬಾರದಿದ್ದ ಕಾರಣ ಯಾರೂ ಅವರನ್ನು ಬಂಧಿಸಲಿಲ್ಲ.</verse>
				<verse number="21">ಯೇಸು ಸ್ವಾಮಿ ಪುನಃ ಅವರಿಗೆ, “ನಾನು ಹೊರಟುಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ. ಆದರೆ ನಿಮ್ಮ ಪಾಪದಲ್ಲೇ ನೀವು ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ,” ಎಂದರು.</verse>
				<verse number="22">ಅದಕ್ಕೆ ಯೆಹೂದ್ಯರು, ‘ತಾನು ಹೋಗುವಲ್ಲಿಗೆ ನಮ್ಮಿಂದ ಬರಲಾಗದಂತೆ! ಹಾಗೆಂದರೆ ಆತ್ಮಹತ್ಯೆ ಮಾಡಿಕೊಳ್ಳಬೇಕೆಂಬುದು ಇವನ ಇಂಗಿತವೆ?’ ಎಂದು ಮಾತನಾಡಿಕೊಂಡರು.</verse>
				<verse number="23">“ನೀವು ನರಲೋಕದವರು, ನಾನು ಪರಲೋಕದವನು. ನಿಮ್ಮಂತೆ ನಾನು ಇಹಲೋಕದವನಲ್ಲ.</verse>
				<verse number="24">ನಿಮ್ಮ ಪಾಪಗಳಲ್ಲೇ ನೀವು ಸಾಯುವಿರೆಂದು ನಾನು ಹೇಳಿದುದು ಇದಕ್ಕಾಗಿಯೇ. ‘ಇರುವಾತನೇ ನಾನು’ ಎಂಬುದನ್ನು ನೀವು ವಿಶ್ವಾಸಿಸದೆಹೋದರೆ ನಿಮ್ಮ ಪಾಪಗಳಲ್ಲೇ ಸಾಯುವಿರಿ,” ಎಂದು ಯೇಸು ಅವರಿಗೆ ಹೇಳಿದರು.</verse>
				<verse number="25">ಅವರು, “ನೀನು ಯಾರು?” ಎಂದು ಪ್ರಶ್ನಿಸಿದರು.</verse>
				<verse number="26">ಯೇಸು, “ನಾನು ಯಾರೆಂದು ನಿಮಗೆ ಮೊದಲಿನಿಂದಲೂ ತಿಳಿಸುತ್ತಾ ಬಂದಿದ್ದೇನೆ. ನಿಮ್ಮನ್ನು ಕುರಿತು ನಾನು ಎಷ್ಟೋ ಹೇಳಿಯೇನು; ಎಷ್ಟೋ ಖಂಡಿಸಿಯೇನು. ಆದರೆ ನನ್ನನ್ನು ಕಳುಹಿಸಿದಾತನು ಹೇಳಿದ್ದನ್ನೇ ಲೋಕಕ್ಕೆ ಸಾರುತ್ತೇನೆ. ಆತನು ಸತ್ಯಸ್ವರೂಪಿ,” ಎಂದು ಹೇಳಿದರು.</verse>
				<verse number="27">ಯೇಸು ಸ್ವಾಮಿ ತಮ್ಮ ಪಿತನನ್ನು ಕುರಿತು ಹೀಗೆನ್ನುತ್ತಿದ್ದಾರೆಂದು ಅವರು ಅರಿತುಕೊಳ್ಳಲಿಲ್ಲ.</verse>
				<verse number="28">ಎಂದೇ ಯೇಸು ಮತ್ತೆ ಇಂತೆಂದರು: “ನರಪುತ್ರನನ್ನು ನೀವು ಮೇಲಕ್ಕೇರಿಸಿದಾಗ, ‘ಇರುವಾತನೇ ನಾನು’ ಎಂದು ನಿಮಗೆ ತಿಳಿಯುವುದು. ನಾನಾಗಿಯೇ ಏನನ್ನೂ ಮಾಡುವುದಿಲ್ಲವೆಂದೂ ಪಿತನು ನನಗೆ ಬೋಧಿಸಿದಂತೆ ನಾನು ಮಾತನಾಡುತ್ತೇನೆಂದೂ ನಿಮಗೆ ಆಗ ಅರಿವಾಗುವುದು.</verse>
				<verse number="29">ನನ್ನನ್ನು ಕಳುಹಿಸಿದಾತನು ನನ್ನೊಡನಿದ್ದಾನೆ. ಆತನು ಮೆಚ್ಚುವುದನ್ನೇ ನಾನು ಸತತವೂ ಮಾಡುವುದರಿಂದ ಆತನು ನನ್ನನ್ನು ಏಕಾಕಿಯಾಗಿ ಬಿಟ್ಟಿಲ್ಲ.”</verse>
				<verse number="30">ಯೇಸು ಸ್ವಾಮಿ ಹೀಗೆ ಹೇಳಿದ್ದನ್ನು ಕೇಳಿ ಹಲವರಿಗೆ ಅವರಲ್ಲಿ ನಂಬಿಕೆ ಹುಟ್ಟಿತು.</verse>
				<verse number="31">ಯೇಸು ಸ್ವಾಮಿ ತಮ್ಮಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ ಹೀಗೆಂದರು: “ನನ್ನ ಮಾತಿಗೆ ನೀವು ಶರಣಾದರೆ ನಿಜವಾಗಿಯೂ ನೀವು ನನ್ನ ಶಿಷ್ಯರು.</verse>
				<verse number="32">ನೀವು ಸತ್ಯವನ್ನು ಅರಿತುಕೊಳ್ಳುವಿರಿ, ಸತ್ಯವು ನಿಮಗೆ ಸ್ವಾತಂತ್ರ್ಯ ನೀಡುವುದು.</verse>
				<verse number="33">ಅದಕ್ಕೆ ಯೆಹೂದ್ಯರು, “ನಾವು ಅಬ್ರಹಾಮನ ವಂಶಜರು; ಯಾರಿಗೂ ಎಂದೂ ನಾವು ದಾಸರಾಗಿಲ್ಲ. ಅಂದಮೇಲೆ ನಾವು ಸ್ವತಂತ್ರರಾಗುತ್ತೇವೆ, ಎಂದು ನೀನು ಹೇಳುವುದಾದರೂ ಹೇಗೆ?” ಎಂದು ಪ್ರಶ್ನಿಸಿದರು.</verse>
				<verse number="34">ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ ಕೇಳಿ: ಪಾಪವನ್ನು ಮಾಡುವವನು ಪಾಪಕ್ಕೆ ದಾಸನೇ.</verse>
				<verse number="35">ದಾಸನಾದವನು ಶಾಶ್ವತವಾಗಿ ಮನೆಯಲ್ಲಿ ಇರುವಂತಿಲ್ಲ. ಶಾಶ್ವತವಾಗಿ ಇರುವವನು ಪುತ್ರನೇ.</verse>
				<verse number="36">ಪುತ್ರನು ನಿಮಗೆ ಸ್ವಾತಂತ್ರ್ಯ ನೀಡಿದರೆ, ನೀವು ನಿಜವಾಗಿಯೂ ಸ್ವತಂತ್ರರು.</verse>
				<verse number="37">ನೀವು ಅಬ್ರಹಾಮನ ವಂಶಜರೆಂದು ನಾನು ಬಲ್ಲೆ. ಆದರೆ ನನ್ನ ಮಾತು ಹಿಡಿಸದ ಕಾರಣ ನನ್ನನ್ನು ಕೊಲ್ಲಲು ಹವಣಿಸುತ್ತೀರಿ.</verse>
				<verse number="38">ನಾನಾಡುವ ಮಾತುಗಳು ಪಿತನ ಸನ್ನಿಧಿಯಲ್ಲಿ ನಾನು ಕಂಡದ್ದನ್ನೇ ನಿರೂಪಿಸುತ್ತವೆ. ನೀವು ಮಾಡುವ ಕಾರ್ಯಗಳೋ ನಿಮ್ಮ ತಂದೆಯಿಂದ ನೀವು ಕಲಿತದ್ದನ್ನೇ ವ್ಯಕ್ತಪಡಿಸುತ್ತವೆ,” ಎಂದರು.</verse>
				<verse number="39">ಆಗ ಆ ಯೆಹೂದ್ಯರು, ಅಬ್ರಹಾಮನೇ ನಮ್ಮ ತಂದೆ,” ಎಂದು ಮರುನುಡಿದರು. ಯೇಸು, “ಅಬ್ರಹಾಮನ ಮಕ್ಕಳು ನೀವಾಗಿದ್ದರೆ ಅಬ್ರಹಾಮನು ಮಾಡಿದಂತೆ ನೀವು ಮಾಡುತ್ತಿದ್ದಿರಿ.</verse>
				<verse number="40">ಅದಕ್ಕೆ ಬದಲಾಗಿ ದೇವರಿಂದಲೇ ತಿಳಿದ ಸತ್ಯವನ್ನು ನಿಮಗೆ ಹೇಳುತ್ತಿರುವ ನನ್ನನ್ನು ಕೊಲ್ಲಲು ಹವಣಿಸುತ್ತಿದ್ದೀರಿ. ಅಬ್ರಹಾಮನು ಹಾಗೇನೂ ಮಾಡಲಿಲ್ಲ.</verse>
				<verse number="41">ನೀವಾದರೋ ನಿಮಗೆ ತಂದೆಯಾದವನು ಮಾಡಿದಂತೆ ಮಾಡುತ್ತೀರಿ,” ಎಂದರು. ಅದಕ್ಕೆ ಅವರು, “ನಾವೇನು ಹಾದರಕ್ಕೆ ಹುಟ್ಟಿದವರಲ್ಲ, ದೇವರೇ ನಮ್ಮ ತಂದೆ,” ಎಂದು ಪ್ರತಿಭಟಿಸಿದರು.</verse>
				<verse number="42">ಯೇಸು, ಅವರಿಗೆ, “ದೇವರೇ ನಿಮ್ಮ ತಂದೆಯಾಗಿದ್ದರೆ, ನನ್ನ ಮೇಲೆ ನಿಮಗೆ ಪ್ರೀತಿಯಿರುತ್ತಿತ್ತು. ಕಾರಣ, ನಾನು ದೇವರಿಂದಲೇ ಹೊರಟು ಇಲ್ಲಿಗೆ ಬಂದವನು. ನನ್ನಷ್ಟಕ್ಕೆ ನಾನೇ ಬರಲಿಲ್ಲ. ನನ್ನನ್ನು ಕಳುಹಿಸಿದ್ದು ದೇವರೇ.</verse>
				<verse number="43">ನಾನು ಹೇಳುವುದು ನಿಮಗೆ ಅರ್ಥವಾಗುವುದಿಲ್ಲ, ಏಕೆ? ನನ್ನ ಸಂದೇಶಕ್ಕೆ ಕಿವಿಗೊಡಲು ನಿಮ್ಮಿಂದಾಗದಿರುವುದೇ ಇದಕ್ಕೆ ಕಾರಣ.</verse>
				<verse number="44">ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.</verse>
				<verse number="45">ನಾನು ನುಡಿಯುವುದಾದರೋ ಸತ್ಯವನ್ನೇ. ಆದುದರಿಂದಲೇ ನಿಮಗೆ ನನ್ನಲ್ಲಿ ನಂಬಿಕೆ ಇಲ್ಲ.</verse>
				<verse number="46">ನನ್ನಲ್ಲಿ ತಪ್ಪಿದೆಯೆಂದು ಸಮರ್ಥಿಸಬಲ್ಲವರು ನಿಮ್ಮಲ್ಲಿ ಯಾರಿದ್ದಾರೆ? ನಾನು ಸತ್ಯವನ್ನೇ ಆಡುವುದಾದರೆ ನನ್ನನ್ನು ನೀವು ನಂಬುವುದಿಲ್ಲವೇಕೆ?</verse>
				<verse number="47">ದೇವರ ಮಕ್ಕಳು ದೇವರ ಮಾತಿಗೆ ಕಿವಿಗೊಡುತ್ತಾರೆ. ನೀವೋ ದೇವರ ಮಕ್ಕಳಲ್ಲ, ಆದುದರಿಂದಲೇ ಕಿವಿಗೊಡುವುದಿಲ್ಲ,” ಎಂದು ನುಡಿದರು.</verse>
				<verse number="48">ಆಗ ಯೆಹೂದ್ಯರಲ್ಲಿ ಕೆಲವರು ಯೇಸು ಸ್ವಾಮಿಗೆ, “ನೀನು ಸಮಾರಿಯದವನು. ದೆವ್ವಹಿಡಿದವನು, ಎಂದು ನಾವು ಹೇಳಿದ್ದು ಸರಿಯಾಗಿದೆ ಅಲ್ಲವೆ?” ಎಂದರು.</verse>
				<verse number="49">ಅದಕ್ಕೆ ಯೇಸು, “ನಾನು ದೆವ್ವಹಿಡಿದವನಲ್ಲ, ನನ್ನ ಪಿತನನ್ನು ನಾನು ಗೌರವಿಸುತ್ತೇನೆ. ನೀವಾದರೋ ನನ್ನನ್ನು ಅವಮಾನಪಡಿಸುತ್ತೀರಿ.</verse>
				<verse number="50">ನನ್ನ ಘನತೆಗೌರವವನ್ನು ನಾನು ಅಪೇಕ್ಷಿಸುವುದಿಲ್ಲ. ಅದನ್ನು ಅಪೇಕ್ಷಿಸುವವರು ಬೇರೊಬ್ಬರಿದ್ದಾರೆ. ನನ್ನ ಪರವಾಗಿ ತೀರ್ಮಾನ ಮಾಡುವುದೂ ಅವರೇ.</verse>
				<verse number="51">ನನ್ನ ಮಾತಿಗೆ ಶರಣಾಗಿ ನಡೆಯುವವನು ನಿತ್ಯಮರಣಕ್ಕೆ ತುತ್ತಾಗನು, ಎಂದು ಸತ್ಯವಾಗಿ ನಿಮಗೆ ಹೇಳುತ್ತೇನೆ,” ಎಂದರು.</verse>
				<verse number="52">“ನೀನು ದೆವ್ವಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, ‘ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು,’ ಎಂದು ಹೇಳುತ್ತಿರುವೆ;</verse>
				<verse number="53">ನಮ್ಮ ತಂದೆ ಅಬ್ರಹಾಮನಿಗಿಂತಲೂ ನೀನು ಶ್ರೇಷ್ಠನೋ? ಆತನೂ ಸಾವಿಗೀಡಾದನು. ಪ್ರವಾದಿಗಳೂ ಸಾವಿಗೆ ಈಡಾಗಿರುವರು; ನೀನು ಯಾರೆಂದು ನಿನ್ನ ಎಣಿಕೆ?” ಎಂದು ಆ ಯೆಹೂದ್ಯ ಅಧಿಕಾರಿಗಳು ಕೇಳಿದರು.</verse>
				<verse number="54">ಯೇಸು ಪ್ರತ್ಯುತ್ತರವಾಗಿ, “ನನ್ನ ಘನತೆಗೌರವವನ್ನು ನಾನೇ ಸಾರ ಹೊರಟರೆ ಅದಕ್ಕೆ ಬೆಲೆಯಿರದು. ನನ್ನ ಘನತೆಗೌರವವನ್ನು ಸಾರುವವರಾದರೋ ನನ್ನ ಪಿತನು. ಆ ಪಿತನನ್ನು ಕುರಿತೇ ‘ಅವರು ನಮ್ಮ ದೇವರು’ ಎಂದು ನೀವು ಹೇಳಿಕೊಳ್ಳುತ್ತೀರಿ.</verse>
				<verse number="55">ಆದರೆ ಅವರ ಅರಿವು ನಿಮಗಿಲ್ಲ; ನನಗಿದೆ. ಅವರ ಅರಿವು ನನಗಿಲ್ಲವೆಂದು ನಾನು ಹೇಳಿದೆಯಾದರೆ ನಿಮ್ಮಂತೆ ನಾನೂ ಸುಳ್ಳುಗಾರನಾಗುತ್ತೇನೆ. ಅವರ ಅರಿವು ನನಗಿದೆ. ಅವರ ಮಾತನ್ನು ನಾನು ಪಾಲಿಸುತ್ತೇನೆ.</verse>
				<verse number="56">ನಿಮ್ಮ ತಂದೆ ಅಬ್ರಹಾಮನು ನನ್ನ ದಿನವನ್ನು ತಾನು ಕಾಣುವನೆಂದು ಹಿಗ್ಗಿದನು. ಆತನು ಅದನ್ನು ಕಂಡೂ ಆಯಿತು; ಹಿಗ್ಗಿಯೂ ಆಯಿತು,” ಎಂದು ಉತ್ತರಕೊಟ್ಟರು.</verse>
				<verse number="57">ಯೆಹೂದ್ಯರು, “ನಿನಗಿನ್ನೂ ಐವತ್ತು ವರ್ಷವಾಗಿಲ್ಲ; ನೀನು ಅಬ್ರಹಾಮನನ್ನು ನೋಡಿದ್ದೀಯಾ?” ಎಂದರು.</verse>
				<verse number="58">ಯೇಸು ಅವರಿಗೆ, “ಅಬ್ರಹಾಮನು ಹುಟ್ಟುವುದಕ್ಕೆ ಮೊದಲಿನಿಂದಲೂ ನಾನಿದ್ದೇನೆ,” ಎಂದು ಮರುನುಡಿದರು.</verse>
				<verse number="59">ಇದನ್ನು ಕೇಳಿದ್ದೇ ಆ ಯೆಹೂದ್ಯರು ಯೇಸುವಿನತ್ತ ಬೀರಲು ಕಲ್ಲುಗಳನ್ನು ಎತ್ತಿಕೊಂಡರು. ಯೇಸುವಾದರೋ ಮರೆಯಾಗಿ ಮಹಾದೇವಾಲಯದಿಂದ ಹೊರಟುಹೋದರು.</verse>
			</chapter>
			<chapter number="9">
				<verse number="1">ಯೇಸು ಸ್ವಾಮಿ ನಡೆದುಹೋಗುತ್ತಿದ್ದಾಗ ಒಬ್ಬ ಹುಟ್ಟು ಕುರುಡನನ್ನು ಕಂಡರು.</verse>
				<verse number="2">ಶಿಷ್ಯರು, “ಗುರುದೇವಾ, ಇವನು ಕುರುಡನಾಗಿ ಹುಟ್ಟಬೇಕಾದರೆ ಅದಕ್ಕೆ ಯಾರ ಪಾಪ ಕಾರಣ? ಇವನದೋ ಅಥವಾ ಇವನನ್ನು ಹೆತ್ತವರದೋ?” ಎಂದು ಕೇಳಿದರು.</verse>
				<verse number="3">ಅದಕ್ಕೆ ಉತ್ತರವಾಗಿ ಯೇಸು, “ಇವನ ಪಾಪವಾಗಲಿ, ಇವನನ್ನು ಹೆತ್ತವರ ಪಾಪವಾಗಲಿ ಇದಕ್ಕೆ ಕಾರಣವಲ್ಲ, ದೇವರ ಕಾರ್ಯ ಇವನಲ್ಲಿ ವ್ಯಕ್ತವಾಗುವಂತೆ ಹೀಗಾಗಿದೆ.</verse>
				<verse number="4">ಹಗಲಿರುವಾಗಲೇ ನನ್ನನ್ನು ಕಳುಹಿಸಿದಾತನ ಕೆಲಸವನ್ನು ನಾನು ಮಾಡುತ್ತಿರಬೇಕು. ರಾತ್ರಿ ಆದಮೇಲೆ ಯಾರೂ ಕೆಲಸ ಮಾಡಲಾಗದು.</verse>
				<verse number="5">ಜಗತ್ತಿನಲ್ಲಿ ನಾನಿರುವಾಗ ಜಗದ ಜ್ಯೋತಿ ನಾನೇ,” ಎಂದು ನುಡಿದರು.</verse>
				<verse number="6">ತರುವಾಯ ನೆಲದಲ್ಲಿ ಉಗುಳಿ, ಮಣ್ಣಿನ ಲೇಪಮಾಡಿ, ಅದನ್ನು ಕುರುಡನ ಕಣ್ಣಿಗೆ ಲೇಪಿಸಿ, “ನೀನು ಶಿಲೋವಾಮಿನ ಕೊಳಕ್ಕೆ ಹೋಗಿ ತೊಳೆದುಕೋ,” ಎಂದು ಹೇಳಿದರು.</verse>
				<verse number="7">(’ಶಿಲೋವಾಮ್’ ಎಂದರೆ ಕಳುಹಿಸಲಾದವನು ಎಂದರ್ಥ). ಅದರಂತೆಯೇ ಆ ಕುರುಡನು ಹೋಗಿ ಕಣ್ಣುಗಳನ್ನು ತೊಳೆದುಕೊಂಡನು; ಹಿಂದಿರುಗಿದಾಗ ಅವನಿಗೆ ಕಣ್ಣು ಬಂದಿತ್ತು.</verse>
				<verse number="8">ಅವನ ನೆರೆಯವರು ಮತ್ತು ಹಿಂದೆ ಅವನು ಭಿಕ್ಷೆಬೇಡುತ್ತಿದ್ದಾಗ ಅವನನ್ನು ನೋಡಿದ್ದವರು, “ಭಿಕ್ಷೆಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೆ?” ಎಂದು ವಿಚಾರಿಸಿದರು.</verse>
				<verse number="9">“ಹೌದು ಅವನೇ,” ಎಂದರು ಕೆಲವರು. “ಇಲ್ಲ, ಇವನು ಅವನಂತೆ ಕಾಣುತ್ತಾನೆ, ಅಷ್ಟೆ,” ಎಂದರು ಇತರರು. ಆ ಕುರುಡನು “ನಾನೇ ಅವನು” ಎಂದು ತಿಳಿಸಿದನು.</verse>
				<verse number="10">ಆಗ ಅವರು, “ಹಾಗಾದರೆ ನಿನಗೆ ಕಣ್ಣು ಹೇಗೆ ಬಂತು?” ಎಂದು ಕೇಳಿದರು.</verse>
				<verse number="11">ಅದಕ್ಕೆ ಅವನು, “ಯೇಸು ಎಂಬುವರು ಮಣ್ಣಿನ ಲೇಪಮಾಡಿ ನನ್ನ ಕಣ್ಣಿಗೆ ಹಚ್ಚಿದರು, ‘ಶಿಲೋವಾಮಿಗೆ ಹೋಗಿ ತೊಳೆದುಕೊ,’ ಎಂದು ಹೇಳಿದರು; ನಾನು ಹೋಗಿ ತೊಳೆದುಕೊಂಡೆ; ನನಗೆ ಕಣ್ಣು ಬಂತು,” ಎಂದು ಹೇಳಿದನು.</verse>
				<verse number="12">ಅದಕ್ಕೆ ಅವರು, “ಆತ ಎಲ್ಲಿದ್ದಾನೆ?” ಎಂದು ವಿಚಾರಿಸಿದರು. ಅವನು, ಉತ್ತರವಾಗಿ “ನಾನರಿಯೆ,” ಎಂದನು.</verse>
				<verse number="13">ಆಗ ಆ ಜನರು ಅವನನ್ನು ಫರಿಸಾಯರ ಬಳಿಗೆ ಕರೆದುಕೊಂಡು ಹೋದರು.</verse>
				<verse number="14">ಏಕೆಂದರೆ ಯೇಸು ಸ್ವಾಮಿ ಮಣ್ಣಿನ ಲೇಪವನ್ನು ಮಾಡಿ ಅವನಿಗೆ ಕಣ್ಣುಕೊಟ್ಟ ದಿನ ಸಬ್ಬತ್ ದಿನವಾಗಿತ್ತು.</verse>
				<verse number="15">ಕಣ್ಣು ಬಂದುದು ಹೇಗೆಂದು ಫರಿಸಾಯರು ಅವನನ್ನು ಮತ್ತೆ ಕೇಳಿದರು. “ಯೇಸು ನನ್ನ ಕಣ್ಣುಗಳಿಗೆ ಮಣ್ಣಿನ ಲೇಪವನ್ನು ಹಚ್ಚಿದರು; ನಾನು ಹೋಗಿ ಕಣ್ಣುಗಳನ್ನು ತೊಳೆದುಕೊಳ್ಳುತ್ತಲೇ ನನಗೆ ದೃಷ್ಟಿ ಬಂತು,” ಎಂದನು ಅವನು.</verse>
				<verse number="16">ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ, ಅವನು ಸಬ್ಬತ್ ನಿಯಮವನ್ನು ಪಾಲಿಸುವುದಿಲ್ಲ,” ಎಂದರು. ಇತರರು, “ಪಾಪಿಯಾದವನು ಇಂಥ ಸೂಚಕಕಾರ್ಯಗಳನ್ನು ಮಾಡಲು ಸಾಧ್ಯವೆ?” ಎಂದರು. ಹೀಗೆ ಅವರಲ್ಲೇ ಭಿನ್ನಬೇಧವುಂಟಾಯಿತು.</verse>
				<verse number="17">ಆದ್ದರಿಂದ ಫರಿಸಾಯರು ಆ ಕುರುಡನನ್ನು ಕುರಿತು, “ಅವನೇ ನಿನಗೆ ಕಣ್ಣುಕೊಟ್ಟನೆಂದು ಹೇಳುತ್ತೀಯಲ್ಲಾ. ಅವನ ಬಗ್ಗೆ ನಿನಗೇನು ಅನ್ನಿಸುತ್ತದೆ?” ಎಂದು ವಿಚಾರಿಸಿದರು. ಅದಕ್ಕೆ ಅವನು, “ಅವರೊಬ್ಬ ಪ್ರವಾದಿಯೇ ಸರಿ,” ಎಂದನು.</verse>
				<verse number="18">ಆ ಕುರುಡನು ಹಿಂದೆ ನಿಜವಾಗಿಯೂ ಕುರುಡನಾಗಿದ್ದು ಈಗ ದೃಷ್ಟಿಪಡೆದಿದ್ದಾನೆ ಎಂದು ಯೆಹೂದ್ಯ ಅಧಿಕಾರಿಗಳು ನಂಬಲು ಒಪ್ಪಲಿಲ್ಲ.</verse>
				<verse number="19">ಈ ಕಾರಣ ಅವನ ಹೆತ್ತವರನ್ನು ಕರೆಯಿಸಿ, “ಇವನು ನಿಮ್ಮ ಮಗನೋ? ಇವನು ಹುಟ್ಟುಕುರುಡನೋ? ಹಾಗಾದರೆ ಇವನಿಗೆ ಈಗ ಕಣ್ಣು ಬಂದದ್ದು ಹೇಗೆ?” ಎಂದು ಕೇಳಿದರು.</verse>
				<verse number="20">ಅದಕ್ಕೆ ಅವನ ತಂದೆತಾಯಿಗಳು, “ಇವನಿಗೆ ದೃಷ್ಟಿ ಬಂದದ್ದು ಹೇಗೆ ಎಂದು ನಮಗೆ ಗೊತ್ತಿಲ್ಲ; ಇವನಿಗೆ ಕಣ್ಣು ಕೊಟ್ಟವರು ಯಾರೆಂದೂ ನಮಗೆ ತಿಳಿಯದು.</verse>
				<verse number="21">ಇವನನ್ನೇ ಕೇಳಿ, ಹೇಗೂ ಪ್ರಾಯದವನಾಗಿದ್ದಾನಲ್ಲವೆ? ತನ್ನ ವಿಷಯವಾಗಿ ತಾನೇ ಮಾತನಾಡಬಲ್ಲ,” ಎಂದು ಉತ್ತರಿಸಿದರು.</verse>
				<verse number="22">ಅವರು ಹೀಗೆ ಹೇಳಿದ್ದು ಯೆಹೂದ್ಯ ಅಧಿಕಾರಿಗಳ ಅಂಜಿಕೆಯಿಂದ. ಏಕೆಂದರೆ, ಯಾರಾದರೂ ಯೇಸುವನ್ನು ಲೋಕೋದ್ಧಾರಕ ಎಂದು ಒಪ್ಪಿಕೊಂಡರೆ ಅಂಥವರಿಗೆ ಪ್ರಾರ್ಥನಾಮಂದಿರದಿಂದ ಬಹಿಷ್ಕಾರ ಹಾಕಬೇಕೆಂದು ಅಧಿಕಾರಿಗಳು ಈ ಮೊದಲೇ ಗೊತ್ತುಮಾಡಿದ್ದರು.</verse>
				<verse number="23">ಆದುದರಿಂದಲೇ, “ಅವನು‍ ಪ್ರಾಯದವನು, ಅವನನ್ನೇ ಕೇಳಿ,” ಎಂದು ಅವನ ತಂದೆತಾಯಿಗಳು ಹೇಳಿದ್ದು.</verse>
				<verse number="24">ಅಧಿಕಾರಿಗಳು ಆ ಹುಟ್ಟು ಕುರುಡನನ್ನು ಮತ್ತೆ ಕರೆಯಿಸಿ, “ನೀನು ದೇವರ ಮುಂದೆ ಪ್ರಮಾಣಮಾಡಿ ಹೇಳು. ಆ ಮನುಷ್ಯ ಪಾಪಿಯೆಂದು ನಮಗೆ ಗೊತ್ತು,” ಎಂದು ಕೇಳಿದರು.</verse>
				<verse number="25">ಉತ್ತರವಾಗಿ ಅವನು, “ಅವರು ಪಾಪಿಯೋ, ಅಲ್ಲವೋ ನಾನರಿಯೆ; ಆದರೆ ನಾನೊಮ್ಮೆ ಕುರುಡನಾಗಿದ್ದೆ; ಈಗಲಾದರೋ ಕಣ್ಣು ಕಾಣಿಸುತ್ತದೆ, ಇಷ್ಟುಮಾತ್ರ ಬಲ್ಲೆ, ಎಂದು ಹೇಳಿದನು.</verse>
				<verse number="26">“ಅವನು ನಿನಗೇನು ಮಾಡಿದ? ನಿನಗೆ ಹೇಗೆ ಕಣ್ಣುಬರಿಸಿದ?” ಎಂದು ಅವರು ಮತ್ತೆ ಪ್ರಶ್ನಿಸಿದರು.</verse>
				<verse number="27">ಅವನು, “ನಿಮಗೆ ಆಗಲೇ ಹೇಳಿದ್ದೇನೆ. ಆದರೆ ನೀವು ನಂಬುವುದಿಲ್ಲ. ಅದನ್ನೇ ಏಕೆ ಮತ್ತೆ ಮತ್ತೆ ಕೇಳುತ್ತೀರಿ? ಅವನ ಶಿಷ್ಯರಾಗಲು ನಿಮಗೂ ಮನಸ್ಸಿದೆಯೇ” ಎಂದನು.</verse>
				<verse number="28">ಆಗ ಅಧಿಕಾರಿಗಳು ಅವನನ್ನು ಶಪಿಸಿದರು. “ನೀನೇ ಅವನ ಶಿಷ್ಯ, ನಾವು ಮೋಶೆಯ ಶಿಷ್ಯರು.</verse>
				<verse number="29">ಮೋಶೆಯೊಡನೆ ದೇವರು ಮಾತನಾಡಿದರು ಎಂಬುದನ್ನು ನಾವು ಬಲ್ಲೆವು. ಆದರೆ ಇವನು ಎಲ್ಲಿಯವನೋ ನಾವು ಅರಿಯೆವು,” ಎಂದರು.</verse>
				<verse number="30">ಅದಕ್ಕೆ ಆ ಕುರುಡ, “ಏನಾಶ್ಚರ್ಯ! ನನಗೆ ಕಣ್ಣು ಬರಿಸಿದ್ದಾರೆ. ಆದರೂ ‘ಅವನು ಎಲ್ಲಿಯವನೋ ನಾವರಿಯೆವು’ ಎನ್ನುತ್ತೀರಿ.</verse>
				<verse number="31">ದೇವರು ಪಾಪಿಗಳಿಗೆ ಓಗೊಡುವುದಿಲ್ಲ. ಯಾರು ಭಕ್ತಿಯಿಂದ ಅವರ ಚಿತ್ತದಂತೆ ನಡೆಯುತ್ತಾರೋ ಅವರಿಗೆ ಓಗೊಡುತ್ತಾರೆಂದು ನಮಗೆಲ್ಲಾ ಚೆನ್ನಾಗಿ ತಿಳಿದಿದೆ.</verse>
				<verse number="32">ಹುಟ್ಟುಕುರುಡನಿಗೆ ಯಾರಾದರೂ ಕಣ್ಣುಕೊಟ್ಟ ಸುದ್ದಿಯನ್ನು ಲೋಕಸೃಷ್ಟಿಯಾದಾಗಿನಿಂದ ಒಬ್ಬರೂ ಕೇಳಿಲ್ಲ.</verse>
				<verse number="33">ಇವರು ದೇವರಿಂದ ಬಂದವರು ಅಲ್ಲದಿದ್ದರೆ ಇಂಥದ್ದೇನನ್ನೂ ಮಾಡಲಾಗುತ್ತಿರಲಿಲ್ಲ,” ಎಂದನು.</verse>
				<verse number="34">ಆಗ ಫರಿಸಾಯರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು, ನಮಗೇ ಬುದ್ಧಿಹೇಳಹೊರಟೆಯಾ?” ಎಂದು ಹೇಳಿ ಅವನನ್ನು ತಳ್ಳಿಬಿಟ್ಟರು.</verse>
				<verse number="35">ಹುಟ್ಟುಕುರುಡನನ್ನು ಹೊರಗೆ ತಳ್ಳಿದ ವಾರ್ತೆ ಯೇಸು ಸ್ವಾಮಿಯ ಕಿವಿಗೆ ಮುಟ್ಟಿತು. ಯೇಸು ಅವನನ್ನು ಕಂಡು, “ನರಪುತ್ರನಲ್ಲಿ ನಿನಗೆ ವಿಶ್ವಾಸವಿದೆಯೇ?’ ಎಂದು ಕೇಳಿದರು.</verse>
				<verse number="36">ಅವನು, “ಅವರು ಯಾರೆಂದು ತಿಳಿಸಿ ಸ್ವಾಮೀ, ನಾನು ವಿಶ್ವಾಸಿಸುತ್ತೇನೆ,” ಎಂದನು.</verse>
				<verse number="37">ಯೇಸು, “ನೀನು ಆತನನ್ನು ಕಂಡಿದ್ದೀಯೆ, ನಿನ್ನೊಡನೆ ಮಾತನಾಡುತ್ತಿರುವ ನಾನೇ ಆತನು,” ಎಂದರು.</verse>
				<verse number="38">“ಸ್ವಾಮೀ, ನಾನು ವಿಶ್ವಾಸಿಸುತ್ತೇನೆ,” ಎಂದು ಹೇಳುತ್ತಾ ಅವನು ಯೇಸುವಿಗೆ ಅಡ್ಡಬಿದ್ದನು.</verse>
				<verse number="39">ಆಗ ಯೇಸು, “ಕುರುಡರು ಕಾಣುವಂತೆಯೂ ಕಾಣುವವರು ಕುರುಡರಾಗುವಂತೆಯೂ ತೀರ್ಪುಕೊಡಲೆಂದೇ ನಾನು ಈ ಲೋಕಕ್ಕೆ ಬಂದುದು,” ಎಂದು ನುಡಿದರು.</verse>
				<verse number="40">ಅಲ್ಲಿ ನಿಂತಿದ್ದ ಫರಿಸಾಯರು ಈ ಮಾತನ್ನು ಕೇಳಿ, “ಹಾಗಾದರೆ ನಾವು ಕೂಡ ಕುರುಡರೋ?’ ಎಂದು ಪ್ರಶ್ನಿಸಿದರು.</verse>
				<verse number="41">ಯೇಸು, “ನೀವು ಕುರುಡರೇ ಆಗಿದ್ದರೆ ಪಾಪಿಗಳಾಗುತ್ತಿರಲಿಲ್ಲ. ಆದರೆ, ‘ನಮಗೆ ಕಣ್ಣು ಕಾಣುತ್ತದೆ,’ ಎಂದು ಹೇಳಿಕೊಳ್ಳುತ್ತೀರಿ; ಆದ್ದರಿಂದ ನೀವು ಪಾಪಿಗಳಾಗಿದ್ದೀರಿ,” ಎಂದರು.</verse>
			</chapter>
			<chapter number="10">
				<verse number="1">“ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಹಟ್ಟಿಗೆ ಬಾಗಿಲ ಮೂಲಕ ಬರದೆ ಗೋಡೆ ಹತ್ತಿಬರುವವನು ಕಳ್ಳ ಹಾಗೂ ಕೊಳ್ಳೆಗಾರ.</verse>
				<verse number="2">ಬಾಗಿಲ ಮೂಲಕ ಬರುವವನು ಕುರಿಗಾಹಿ.</verse>
				<verse number="3">ಕಾವಲುಗಾರನು ಅವನಿಗೆ ಬಾಗಿಲು ತೆರೆಯುತ್ತಾನೆ. ಕುರಿಗಳು ಅವನ ಸ್ವರವನ್ನು ಕೇಳುತ್ತವೆ. ಅವನು ತನ್ನ ಕುರಿಗಳನ್ನು ಹೆಸರಿಟ್ಟು ಕರೆದು ಹೊರಗೆ ಬಿಡುತ್ತಾನೆ.</verse>
				<verse number="4">ತನ್ನ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ನಂತರ ಅವುಗಳ ಮುಂದೆ ಹೋಗುತ್ತಾನೆ. ಕುರಿಗಳು ಅವನ ಹಿಂದೆ ಹೋಗುತ್ತವೆ. ಏಕೆಂದರೆ ಅವುಗಳಿಗೆ ಅವನ ಸ್ವರ ಗೊತ್ತು.</verse>
				<verse number="5">ಅಪರಿಚಿತನನ್ನು ಅವು ಹಿಂಬಾಲಿಸುವುದಿಲ್ಲ; ಅವನಿಂದ ದೂರ ಓಡಿಹೋಗುತ್ತವೆ. ಅಪರಿಚಿತರ ಸ್ವರವನ್ನು ಅವು ಗುರುತಿಸುವುದಿಲ್ಲ.</verse>
				<verse number="6">ಯೇಸು ಸ್ವಾಮಿ ಹೇಳಿದ ಈ ಸಾಮತಿಯನ್ನು ಕೇಳಿದವರು ಅರ್ಥಮಾಡಿಕೊಳ್ಳಲಿಲ್ಲ.</verse>
				<verse number="7">ಆದುದರಿಂದ ಯೇಸು ಸ್ವಾಮಿ, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ಕುರಿಗಳಿಗೆ ನಾನೇ ಬಾಗಿಲು.</verse>
				<verse number="8">ನನಗಿಂತ ಮೊದಲು ಬಂದವರೆಲ್ಲರು ಕಳ್ಳರು ಹಾಗೂ ಕೊಳ್ಳೆಗಾರರು. ಕುರಿಗಳು ಅವರಿಗೆ ಕಿವಿಗೊಡಲಿಲ್ಲ.</verse>
				<verse number="9">ಹೌದು, ನಾನೇ ಬಾಗಿಲು, ನನ್ನ ಮೂಲಕ ಒಳಹೋಗುವವನು ಸುರಕ್ಷಿತನಾಗಿರುತ್ತಾನೆ. ಅವನು ಒಳಗೆ ಹೋಗುತ್ತಾನೆ, ಹೊರಗೆ ಬರುತ್ತಾನೆ; ಮೇವನ್ನು ಕಂಡುಕೊಳ್ಳುತ್ತಾನೆ.</verse>
				<verse number="10">ಕಳ್ಳನು ಬರುವುದು ಕಳ್ಳತನಕ್ಕಾಗಿ, ಕೊಲ್ಲುವುದಕ್ಕಾಗಿ ಮತ್ತು ನಾಶಮಾಡುವುದಕ್ಕಾಗಿ ಮಾತ್ರ. ನಾನು ಬಂದದ್ದಾದರೋ ಜೀವನೀಡಲು, ಯಥೇಚ್ಛವಾಗಿ ನೀಡಲು.</verse>
				<verse number="11">“ನಾನೇ ಉತ್ತಮ ಕುರಿಗಾಹಿ. ಉತ್ತಮ ಕುರಿಗಾಹಿಯು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನೇ ಕೊಡುತ್ತಾನೆ.</verse>
				<verse number="12">ಕುರಿಗಾಹಿಯಾಗಲಿ, ಕುರಿಗಳ ಒಡೆಯನಾಗಲಿ ಅಲ್ಲದ ಕೂಲಿಯಾಳು, ತೋಳ ಬರುವುದನ್ನು ಕಂಡದ್ದೇ, ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ. ತೋಳವು ಬಂದು ಕುರಿಗಳ ಮೇಲೆ ಎರಗಿ, ಮಂದೆಯನ್ನು ಚದರಿಸುತ್ತದೆ.</verse>
				<verse number="13">ಅವನು ಕೇವಲ ಕೂಲಿಯಾಳು; ಕುರಿಗಳ‍ ಚಿಂತೆ ಅವನಿಗಿಲ್ಲ.</verse>
				<verse number="14">ನಾನಾದರೋ ಉತ್ತಮ ಕುರಿಗಾಹಿ. ಪಿತನು ನನ್ನನ್ನು ಬಲ್ಲರು; ನಾನೂ ಪಿತನನ್ನು ಬಲ್ಲೆ. ಅಂತೆಯೇ ನಾನು ನನ್ನ ಕುರಿಗಳನ್ನು ಬಲ್ಲೆನು; ಅವು ನನ್ನನ್ನು ಬಲ್ಲವು. ಅವುಗಳಿಗೋಸ್ಕರ ನಾನು ನನ್ನ ಪ್ರಾಣವನ್ನೇ ಕೊಡುತ್ತೇನೆ.</verse>
				<verse number="15"></verse>
				<verse number="16">ಈ ಮಂದೆಗೆ ಸೇರದ ಬೇರೆ ಕುರಿಗಳೂ ನನಗಿವೆ. ಅವನ್ನೂ ನಾನು ಕರೆತರಬೇಕು. ಅವು ಸಹ ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು. ಒಬ್ಬನೇ ಕುರಿಗಾಹಿ ಇರುವನು.</verse>
				<verse number="17">“ಏಕೆಂದರೆ, ನನ್ನ ಪಿತನಿಗೆ ನನ್ನಲ್ಲಿ ಪ್ರೀತಿ ಇದೆ. ನನ್ನ ಪ್ರಾಣವನ್ನು ಮರಳಿ ಪಡೆಯುವಂತೆ ನಾನದನ್ನು ಧಾರೆಯೆರೆಯುತ್ತೇನೆ.</verse>
				<verse number="18">ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನಾಗಿಯೇ ಅದನ್ನು ಧಾರೆಯೆರೆಯುತ್ತೇನೆ. ಅದನ್ನು ಧಾರೆಯೆರೆಯುವ ಹಕ್ಕು ನನಗಿದೆ. ಅದನ್ನು ಪುನಃ ಪಡೆಯುವ ಹಕ್ಕು ಸಹ ನನಗಿದೆ. ಈ ಆಜ್ಞೆಯನ್ನು ನಾನು ನನ್ನ ಪಿತನಿಂದ ಪಡೆದಿದ್ದೇನೆ,” ಎಂದು ನುಡಿದರು.</verse>
				<verse number="19">ಈ ಮಾತುಗಳನ್ನು ಕೇಳಿದ ಯೆಹೂದ್ಯರಲ್ಲಿ ಮತ್ತೆ ವಾದವೆದ್ದಿತು.</verse>
				<verse number="20">ಅವರಲ್ಲಿ ಹಲವರು, “ಅವನಿಗೆ ದೆವ್ವಹಿಡಿದಿದೆ: ಅವನೊಬ್ಬ ಹುಚ್ಚ, ಅವನಿಗೇಕೆ ಕಿವಿಗೊಡುತ್ತೀರಿ?” ಎಂದರು.</verse>
				<verse number="21">ಉಳಿದವರಾದರೋ, “ಇವು ದೆವ್ವಹಿಡಿದವನ ಮಾತುಗಳೆಂದಿಗೂ ಅಲ್ಲ. ದೆವ್ವವು ಕುರುಡನಿಗೆ ಕಣ್ಣು ಕೊಡುವುದುಂಟೆ?” ಎಂದರು.</verse>
				<verse number="22">ಅದು ಚಳಿಗಾಲವಾಗಿತ್ತು. ಜೆರುಸಲೇಮಿನಲ್ಲಿ ಮಹಾದೇವಾಲಯದ ಪ್ರತಿಷ್ಠಾಪನೆಯ ಹಬ್ಬಾಚರಣೆ ನಡೆಯುತ್ತಿತ್ತು.</verse>
				<verse number="23">ಯೇಸು ಸ್ವಾಮಿ ಆ ದೇವಾಲಯದ ಆವರಣದಲ್ಲಿದ್ದ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಿದ್ದರು.</verse>
				<verse number="24">ಯೆಹೂದ್ಯರು ಅವರನ್ನು ಸುತ್ತುವರಿದು, “ಇನ್ನೆಷ್ಟುಕಾಲ ನಮ್ಮನ್ನು ಸಂಶಯದಲ್ಲಿರಿಸುವೆ?ನೀನೇ ಅಭಿಷಿಕ್ತನಾದ ಲೋಕೋದ್ಧಾರಕ ಆಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು,” ಎಂದರು.</verse>
				<verse number="25">ಯೇಸು ಪ್ರತ್ಯುತ್ತರವಾಗಿ, “ನಾನು ನಿಮಗೆ ಹೇಳಿಯಾಯಿತು. ಆದರೂ ನೀವು ನಂಬುತ್ತಿಲ್ಲ. ನನ್ನ ಪಿತನ ಹೆಸರಿನಲ್ಲಿ ನಾನು ಮಾಡುವ ಕಾರ್ಯಗಳೇ ನನ್ನ ಪರವಾಗಿ ಸಾಕ್ಷಿಕೊಡುತ್ತವೆ.</verse>
				<verse number="26">ಆದರೂ ನಿಮಗೆ ನಂಬಿಕೆಯೆಂಬುದಿಲ್ಲ. ಕಾರಣ, ನೀವು ನನ್ನ ಕುರಿಗಳಲ್ಲ.</verse>
				<verse number="27">ನನ್ನ ಕುರಿಗಳಾದರೋ ನನ್ನ ಸ್ವರವನ್ನು ಗುರುತಿಸುತ್ತವೆ. ನಾನು ಅವನ್ನು ಬಲ್ಲೆನು. ಅವು ನನ್ನನ್ನು ಹಿಂಬಾಲಿಸುತ್ತವೆ.</verse>
				<verse number="28">ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ. ಅವು ಎಂದಿಗೂ ನಾಶ ಆಗುವುದಿಲ್ಲ. ನನ್ನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು,</verse>
				<verse number="29">ಅವನ್ನು ನನಗೆ ಕೊಟ್ಟ ಪಿತ ಸರ್ವಶ್ರೇಷ್ಠರು. ಪಿತನ ಕೈಯಿಂದ ಅವನ್ನು ಯಾರೂ ಕಸಿದುಕೊಳ್ಳಲಾರರು.</verse>
				<verse number="30">ನಾನೂ ಪಿತನೂ ಒಂದೇ ಆಗಿದ್ದೇವೆ,” ಎಂದರು.</verse>
				<verse number="31">ಆಗ ಯೆಹೂದ್ಯರು, ಅವರತ್ತ ಬೀರಲು ಕಲ್ಲುಗಳನ್ನು ಆಯ್ದುಕೊಂಡರು.</verse>
				<verse number="32">ಅದಕ್ಕೆ ಯೇಸು, “ಪಿತನ ಹೆಸರಿನಲ್ಲಿ ನಾನು ಎಷ್ಟೋ ಸತ್ಕಾರ್ಯಗಳನ್ನು ನಿಮ್ಮ ಮುಂದೆ ಮಾಡಿದ್ದೇನೆ. ಇವುಗಳಲ್ಲಿ ಯಾವುದಕ್ಕಾಗಿ ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದರು.</verse>
				<verse number="33">ಅದಕ್ಕೆ ಯೆಹೂದ್ಯರು, “ನಿನ್ನ ಮೇಲೆ ಕಲ್ಲೆಸೆಯುವುದು ಸತ್ಕಾರ್ಯಕ್ಕಾಗಿ ಅಲ್ಲ, ದೇವದೂಷಣೆಗಾಗಿ. ನೀನು ಮನುಷ್ಯ ಮಾತ್ರನು; ಆದರೂ ನಿನ್ನನ್ನೇ ದೇವರನ್ನಾಗಿ ಮಾಡಿಕೊಳ್ಳುತ್ತಿದ್ದೀಯೇ,” ಎಂದು ಉತ್ತರಕೊಟ್ಟರು.</verse>
				<verse number="34">ಆಗ ಯೇಸು, “ ‘ನೀವು ದೇವರುಗಳು’ ಎಂದು ದೇವರೇ ಹೇಳಿರುವ ಮಾತು ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದಿದೆಯಲ್ಲವೆ?</verse>
				<verse number="35">ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಕರೆಯಲಾಗಿದೆ. ಹೀಗೆ ಪವಿತ್ರಗ್ರಂಥದಲ್ಲೇ ಲಿಖಿತವಾಗಿರುವುದು ನಿರರ್ಥಕವೇನೂ ಅಲ್ಲ.</verse>
				<verse number="36">ಇಂತಿರುವಲ್ಲಿ, ಪಿತನೇ ಪ್ರತಿಷ್ಠಿಸಿ ಕಳುಹಿಸಿಕೊಟ್ಟವನಾದ ನಾನು, ‘ದೇವರ ಪುತ್ರನಾಗಿದ್ದೇನೆ’ ಎಂದು ಹೇಳಿಕೊಂಡಿದ್ದಕ್ಕೆ, ‘ಇವನು ದೇವದೂಷಣೆ ಮಾಡಿದ್ದಾನೆ’ ಎನ್ನುತ್ತೀರಲ್ಲಾ?</verse>
				<verse number="37">ನಾನು ನನ್ನ ಪಿತನ ಕಾರ್ಯಗಳನ್ನು ಮಾಡದಿದ್ದರೆ ನೀವು ನನ್ನನ್ನು ನಂಬಬೇಕಾಗಿಲ್ಲ.</verse>
				<verse number="38">ನಾನು ಹಾಗೆ ಮಾಡಿದ್ದೇ ಆದರೆ, ನನ್ನನ್ನು ನಂಬದೆಹೋದರೂ ನನ್ನ ಕಾರ್ಯಗಳನ್ನಾದರೂ ನಂಬಿರಿ. ಆಗ ಪಿತನು ನನ್ನಲ್ಲಿಯೂ ನಾನು ಪಿತನಲ್ಲಿಯೂ ಇರುವುದು ನಿಮಗೆ ಅರಿವಾಗುವುದು ಹಾಗೂ ಮನದಟ್ಟಾಗುವುದು,” ಎಂದರು.</verse>
				<verse number="39">ಮತ್ತೊಮ್ಮೆ ಯೇಸುವನ್ನು ಬಂಧಿಸಲು ಆ ಯೆಹೂದ್ಯರು ಪ್ರಯತ್ನಿಸಿದರು. ಆದರೆ ಯೇಸು ಅವರ ಕೈಯಿಂದ ತಪ್ಪಿಸಿಕೊಂಡರು.</verse>
				<verse number="40">ಬಳಿಕ ಯೇಸು ಸ್ವಾಮಿ ಜೋರ್ಡನ್ ನದಿಯನ್ನು ದಾಟಿ ಯೊವಾನ್ನನು ಮೊತ್ತಮೊದಲು ಸ್ನಾನದೀಕ್ಷೆಯನ್ನು ಕೊಡುತ್ತಿದ್ದ ಸ್ಥಳಕ್ಕೆ ಬಂದು ಅಲ್ಲಿ ತಂಗಿದರು.</verse>
				<verse number="41">ಹಲವರು ಅವರ ಬಳಿಗೆ ಬರತೊಡಗಿದರು. ‘ಯೊವಾನ್ನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ; ಆದರೆ ಇವರ ವಿಷಯವಾಗಿ ಆತ ಹೇಳಿದ್ದೆಲ್ಲವೂ ನಿಜವಾಗಿದೆ’ ಎಂದು ಆ ಜನರು ಮಾತನಾಡಿಕೊಳ್ಳುತ್ತಿದ್ದರು.</verse>
				<verse number="42">ಅಲ್ಲಿ ಹಲವರಿಗೆ ಯೇಸುವಿನಲ್ಲಿ ವಿಶ್ವಾಸ ಹುಟ್ಟಿತು.</verse>
			</chapter>
			<chapter number="11">
				<verse number="1">ಬೆಥಾನಿಯ ಎಂಬ ಊರಿನಲ್ಲಿ ಲಾಸರ್ ಎಂಬವನು ಅಸ್ವಸ್ಥನಾಗಿದ್ದನು. ಮರಿಯ ಮತ್ತು ಅವಳ ಸಹೋದರಿ ಮಾರ್ತ ಎಂಬವರ ಊರು ಅದೇ ಆಗಿತ್ತು. (</verse>
				<verse number="2">ಹಿಂದೊಮ್ಮೆ ಪ್ರಭುವಿನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿ ಅವರ ಪಾದಗಳನ್ನು ತನ್ನ ತಲೆಗೂದಲಿನಿಂದ ಒರಸಿದವಳೇ ಈ ಮರಿಯ. ಅಸ್ವಸ್ಥನಾಗಿದ್ದ ಲಾಸರನು ಇವಳ ಸಹೋದರ.)</verse>
				<verse number="3">ಈ ಸಹೋದರಿಯರು, ಯೇಸು ಸ್ವಾಮಿಗೆ, “ಪ್ರಭುವೇ, ನಿಮ್ಮ ಆಪ್ತಮಿತ್ರನು ಅಸ್ವಸ್ಥನಾಗಿದ್ದಾನೆ,” ಎಂದು ಹೇಳಿಕಳುಹಿಸಿದರು.</verse>
				<verse number="4">ಇದನ್ನು ಕೇಳಿದ ಯೇಸು, “ಈ ಕಾಯಿಲೆ ಮರಣಕ್ಕಾಗಿ ಬಂದುದಲ್ಲ, ದೇವರ ಮಹಿಮೆಗೋಸ್ಕರ ಬಂದಿದೆ. ಇದರ ಮೂಲಕ ದೇವರ ಪುತ್ರನಿಗೆ ಮಹಿಮೆ ಉಂಟಾಗಲಿದೆ,” ಎಂದು ನುಡಿದರು.</verse>
				<verse number="5">ಮಾರ್ತ, ಅವಳ ಸಹೋದರಿ ಮರಿಯ ಮತ್ತು ಲಾಸರ, ಇವರು ಯೇಸುವಿಗೆ ಅಚ್ಚುಮೆಚ್ಚಿನವರು.</verse>
				<verse number="6">ಲಾಸರನ ಕಾಯಿಲೆಯ ಸುದ್ದಿಯನ್ನು ಕೇಳಿದ ಮೇಲೂ ಯೇಸು ತಾವಿದ್ದಲ್ಲಿಯೇ ಇನ್ನೂ ಎರಡು ದಿನ ಉಳಿದುಕೊಂಡರು.</verse>
				<verse number="7">ಅನಂತರ ತಮ್ಮ ಶಿಷ್ಯರಿಗೆ, “ಬನ್ನಿ, ಜುದೇಯಕ್ಕೆ ಮರಳಿಹೋಗೋಣ,” ಎಂದರು.</verse>
				<verse number="8">ಆ ಶಿಷ್ಯರು, “ಗುರುದೇವಾ, ಇತ್ತೀಚೆಗೆ ತಾನೆ ಯೆಹೂದ್ಯರು ನಿಮ್ಮನ್ನು ಕಲ್ಲಿನಿಂದ ಹೊಡೆಯಬೇಕೆಂದಿದ್ದರು. ಪುನಃ ಅಲ್ಲಿಗೇ ಹೋಗಬೇಕೆಂದಿರುವಿರಾ?” ಎಂದು ಕೇಳಿದರು.</verse>
				<verse number="9">ಅದಕ್ಕೆ ಯೇಸು, “ಹಗಲಿಗೆ ಹನ್ನೆರಡು ತಾಸು ಉಂಟಲ್ಲವೆ? ಹಗಲಿನಲ್ಲಿ ನಡೆಯುವವನು ಎಡವಿಬೀಳುವುದಿಲ್ಲ. ಏಕೆಂದರೆ ಈ ಲೋಕದ ಬೆಳಕು ಅವನಿಗೆ ಕಾಣಿಸುತ್ತದೆ.</verse>
				<verse number="10">ಆದರೆ ರಾತ್ರಿಯಲ್ಲಿ ನಡೆಯುವವನು ಎಡವಿಬೀಳುತ್ತಾನೆ. ಕಾರಣ, ಅವನಲ್ಲಿ ಬೆಳಕು ಇಲ್ಲ,” ಎಂದರು.</verse>
				<verse number="11">ಬಳಿಕ ಯೇಸು, “ನಮ್ಮ ಮಿತ್ರನಾದ ಲಾಸರನು ನಿದ್ರೆಮಾಡುತ್ತಿದ್ದಾನೆ, ಅವನನ್ನು ಎಬ್ಬಿಸಲು ನಾನು ಹೋಗಬೇಕು,” ಎಂದು ನುಡಿದರು.</verse>
				<verse number="12">ಶಿಷ್ಯರು, “ಪ್ರಭುವೇ, ಅವನು ನಿದ್ರೆಮಾಡುತ್ತಿರುವನಾದರೆ ಚೇತರಿಸಿಕೊಳ್ಳುತ್ತಾನೆ,” ಎಂದರು.</verse>
				<verse number="13">ಯೇಸು ಹೇಳಿದ್ದು ಅವನ ಮರಣವನ್ನು ಕುರಿತು. ಶಿಷ್ಯರಾದರೋ ಅದು ಸಾಮಾನ್ಯ ನಿದ್ರೆಯೆಂದು ತಿಳಿದುಕೊಂಡರು.</verse>
				<verse number="14">ಆದುದರಿಂದ ಯೇಸು ಅವರಿಗೆ ಸ್ಪಷ್ಟವಾಗಿ, “ಲಾಸರನು ಸತ್ತುಹೋಗಿದ್ದಾನೆ;</verse>
				<verse number="15">ನಾನು ಅಲ್ಲಿ ಇಲ್ಲದೆಹೋದದ್ದು ನಿಮಗೆ ಒಳ್ಳೆಯದೇ ಆಯಿತು. ನಿಮಗೆ ನನ್ನಲ್ಲಿ ವಿಶ್ವಾಸ ಮೂಡುವಂತೆ ಇದೆಲ್ಲಾ ನಡೆದಿದೆ. ಬನ್ನಿ, ಅವನ ಬಳಿಗೆ ಹೋಗೋಣ,” ಎಂದರು.</verse>
				<verse number="16">ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಕೂಡ ಪ್ರಭುವಿನೊಡನೆ ಹೋಗಿ ಸಾಯೋಣ,” ಎಂದು ಹೇಳಿದನು.</verse>
				<verse number="17">ಯೇಸು ಸ್ವಾಮಿ ಅಲ್ಲಿಗೆ ಬಂದಾಗ ಲಾಸರನನ್ನು ಸಮಾಧಿಯಲ್ಲಿ ಹೂಳಿಟ್ಟು ಆಗಾಗಲೇ ನಾಲ್ಕು ದಿನಗಳಾಗಿದ್ದುವೆಂದು ತಿಳಿಯಿತು.</verse>
				<verse number="18">ಬೆಥಾನಿಯ ಜೆರುಸಲೇಮಿನಿಂದ ಸುಮಾರು ಮೂರು ಕಿಲೊಮೀಟರು ದೂರದಲ್ಲಿದೆ.</verse>
				<verse number="19">ಅನೇಕ ಯೆಹೂದ್ಯರು ಮಾರ್ತಳನ್ನೂ ಮರಿಯಳನ್ನೂ ಕಂಡು ಅವರ ಸೋದರನ ಮರಣಕ್ಕಾಗಿ ಸಂತಾಪ ಸೂಚಿಸಲು ಬಂದಿದ್ದರು.</verse>
				<verse number="20">ಯೇಸು ಬರುತ್ತಿದ್ದಾರೆಂದು ಕೇಳಿದೊಡನೆ ಮಾರ್ತ ಅವರನ್ನು ಎದುರುಗೊಳ್ಳಲು ಹೋದಳು. ಮರಿಯ ಮನೆಯಲ್ಲೇ ಇದ್ದಳು.</verse>
				<verse number="21">ಮಾರ್ತ ಯೇಸುವನ್ನು ಕಂಡು, “ಪ್ರಭುವೇ, ನೀವು ಇಲ್ಲಿದ್ದಿದ್ದರೆ ನನ್ನ ಸಹೋದರ ಸಾಯುತ್ತಿರಲಿಲ್ಲ.</verse>
				<verse number="22">ಈಗಲೂ ದೇವರಲ್ಲಿ ನೀವು ಏನೇ ಕೇಳಿಕೊಂಡರೂ ನಿಮಗವರು ನೀಡುವರೆಂದು ನಾನು ಬಲ್ಲೆ,” ಎಂದಳು.</verse>
				<verse number="23">ಯೇಸು, “ನಿನ್ನ ಸಹೋದರನು ಜೀವಂತವಾಗಿ ಏಳುವನು,” ಎಂದರು.</verse>
				<verse number="24">“ಅವನು ಅಂತಿಮ ದಿನದ ಪುನರುತ್ಥಾನದಲ್ಲಿ ಜೀವಂತನಾಗಿ ಏಳುವನೆಂದು ನನಗೆ ತಿಳಿದಿದೆ,” ಎಂದಳು ಮಾರ್ತ.</verse>
				<verse number="25">ಯೇಸು, ಅವಳಿಗೆ, “ಪುನರುತ್ಥಾನವೂ ಜೀವವೂ ನಾನೇ; ನನ್ನಲ್ಲಿ ವಿಶ್ವಾಸವಿಟ್ಟವನು ಸಾವಿಗೀಡಾದರೂ ಜೀವಿಸುವನು.</verse>
				<verse number="26">ಜೀವಿಸುವ ಪ್ರತಿಯೊಬ್ಬನೂ ನನ್ನಲ್ಲಿ ವಿಶ್ವಾಸವಿಟ್ಟನೆಂದರೆ ಅವನೆಂದಿಗೂ ಸಾಯನು. ಇದನ್ನು ನೀವು ವಿಶ್ವಾಸಿಸುತ್ತೀಯಾ?” ಎಂದು ಕೇಳಲು ಅವಳು,</verse>
				<verse number="27">“ಹೌದು ಪ್ರಭುವೇ, ನೀವೇ ಅಭಿಷಿಕ್ತರಾದ ಲೋಕೋದ್ಧಾರಕ; ದೇವರ ಪುತ್ರ; ಈ ಲೋಕಕ್ಕೆ ಬರಬೇಕಾದವರು - ಎಂದು ನಾನು ವಿಶ್ವಾಸಿಸುತ್ತೇನೆ,” ಎಂದು ಹೇಳಿದಳು.</verse>
				<verse number="28">ಹೀಗೆ ಹೇಳಿದ ಮೇಲೆ ಅವಳು ತನ್ನ ಸೋದರಿಯನ್ನು ಕರೆಯಲು ಹೋದಳು. ಅವಳನ್ನು ಕಂಡು, “ಬೋಧಕರು ಬಂದಿದ್ದಾರೆ; ನಿನ್ನನ್ನು ಕರೆಯುತ್ತಿದ್ದಾರೆ,” ಎಂದು ಹೇಳಿದಳು.</verse>
				<verse number="29">ಇದನ್ನು ಕೇಳಿದ ಮರಿಯಳು ತಟ್ಟನೆ ಎದ್ದು ಯೇಸುವನ್ನು ಕಾಣಹೋದಳು.</verse>
				<verse number="30">ಯೇಸು ಇನ್ನೂ ಊರೊಳಗೆ ಬಂದಿರಲಿಲ್ಲ; ಮಾರ್ತ ತಮ್ಮನ್ನು ಎದುರುಗೊಂಡ ಸ್ಥಳದಲ್ಲಿಯೇ ಇದ್ದರು.</verse>
				<verse number="31">ಇತ್ತ ಮನೆಯಲ್ಲಿ ಮರಿಯಳನ್ನು ಸಂತೈಸಿಕೊಂಡಿದ್ದ ಯೆಹೂದ್ಯರು, ಆಕೆ ಅವಸರವಸರವಾಗಿ ಎದ್ದುಹೋಗುವುದನ್ನು ಕಂಡು ಗೋಳಿಡುವುದಕ್ಕಾಗಿ ಸಮಾಧಿಯ ಕಡೆಗೆ ಹೋಗುತ್ತಿದ್ದಾಳೆಂದು ಎಣಿಸಿ ಆಕೆಯ ಹಿಂದೆಯೇ ಹೋದರು.</verse>
				<verse number="32">ಮರಿಯಳು ಯೇಸುವಿನ ಬಳಿಗೆ ಬಂದಕೂಡಲೇ ಅವರ ಕಾಲಿಗೆ ಬಿದ್ದು, “ಪ್ರಭುವೇ, ನೀವು ಇಲ್ಲಿದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ,” ಎಂದಳು.</verse>
				<verse number="33">ಆಕೆಯ ಮತ್ತು ಆಕೆಯೊಡನೆ ಬಂದಿದ್ದ ಯೆಹೂದ್ಯರ ಗೋಳಾಟವನ್ನು ಯೇಸು ನೋಡಿದರು. ಅವರ ಮನ ಕರಗಿತು; ದುಃಖ ತುಂಬಿಬಂದಿತು.</verse>
				<verse number="34">ಯೇಸು ಅವರಿಗೆ, “ಆತನನ್ನು ಎಲ್ಲಿ ಸಮಾಧಿಮಾಡಿದ್ದೀರಿ?” ಎಂದು ಕೇಳಿದರು. ಅವರು, “ಬಂದು ನೋಡಿ ಸ್ವಾಮೀ,” ಎಂದರು.</verse>
				<verse number="35">ಯೇಸು ಕಣ್ಣೀರಿಟ್ಟರು.</verse>
				<verse number="36">ಇದನ್ನು ಕಂಡ ಯೆಹೂದ್ಯರು, “ಅವನ ಮೇಲೆ ಈತನಿಗೆಷ್ಟು ಪ್ರೀತಿಯಿತ್ತು, ನೋಡಿದಿರಾ!” ಎಂದುಕೊಂಡರು.</verse>
				<verse number="37">ಕೆಲವರಾದರೋ, “ಆ ಕುರುಡನಿಗೆ ಕಣ್ಣುಕೊಟ್ಟ ಈತ ಲಾಸರನು ಸಾಯದಂತೆ ಮಾಡಬಾರದಿತ್ತೆ?” ಎಂದರು.</verse>
				<verse number="38">ಯೇಸು ಸ್ವಾಮಿ ಮತ್ತೊಮ್ಮೆ ಮನಮರುಗಿ, ಸಮಾಧಿಯ ಬಳಿಗೆ ಬಂದರು. ಅದು ಒಂದು ಗವಿಯಾಗಿತ್ತು; ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಲಾಗಿತ್ತು.</verse>
				<verse number="39">ಯೇಸು, “ಆ ಕಲ್ಲನ್ನು ತೆಗೆಯಿರಿ,” ಎಂದು ಆಜ್ಞಾಪಿಸಿದರು.ಮೃತನ ಸಹೋದರಿಯಾದ ಮಾರ್ತಳು, “ಪ್ರಭುವೇ, ಅವನು ಸತ್ತು ನಾಲ್ಕು ದಿನಗಳಾದವು; ಈಗಾಗಲೇ ಅವನ ದೇಹ ಕೊಳೆತು ನಾರುತ್ತಿರಬೇಕು,” ಎಂದಳು.</verse>
				<verse number="40">“ನಿನಗೆ ವಿಶ್ವಾಸವಿದ್ದಲ್ಲಿ ದೇವರ ಮಹಿಮೆಯನ್ನು ಕಾಣುವೆ ಎಂದು ನಾನು ಹೇಳಲಿಲ್ಲವೇ?” ಎಂದು ಮರು ನುಡಿದರು ಯೇಸು.</verse>
				<verse number="41">ಆಗ ಕಲ್ಲನ್ನು ತೆಗೆದುಹಾಕಲಾಯಿತು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ಪಿತನೇ, ನನ್ನ ಪ್ರಾರ್ಥನೆಗೆ ನೀವು ಕಿವಿಗೊಡುತ್ತೀರಿ; ಆದುದರಿಂದ ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.</verse>
				<verse number="42">ನನ್ನ ಪ್ರಾರ್ಥನೆಗೆ ನೀವು ಯಾವಾಗಲೂ ಕಿವಿಗೊಡುತ್ತೀರಿ ಎಂಬುದು ನನಗೆ ಚೆನ್ನಾಗಿ ತಿಳಿದಿದೆ. ಆದರೆ ನನ್ನನ್ನು ಕಳುಹಿಸಿದಾತ ನೀವೇ ಎಂದು ಸುತ್ತಲೂ ನೆರೆದಿರುವವರು ನಂಬುವಂತೆ ನಾನು ಹೀಗೆ ಹೇಳಿದೆನು,” ಎಂದು ನುಡಿದರು.</verse>
				<verse number="43">ಅನಂತರ ಗಟ್ಟಿಯಾದ ಧ್ವನಿಯಿಂದ, “ಲಾಸರನೇ, ಹೊರಗೆ ಬಾ,” ಎಂದು ಕೂಗಿದರು.</verse>
				<verse number="44">ಸತ್ತಿದ್ದವನು ಕೂಡಲೇ ಹೊರಗೆ ಬಂದನು. ಅವನ ಕೈಕಾಲುಗಳು ಶವವಸ್ತ್ರದಿಂದ ಸುತ್ತಿದ್ದವು; ಮುಖವು ಬಟ್ಟೆಯಿಂದ ಮುಚ್ಚಿತ್ತು. ಆಗ ಯೇಸು, “ಕಟ್ಟುಗಳನ್ನು ಬಿಚ್ಚಿ ಅವನನ್ನು ಹೋಗಲು ಬಿಡಿ,” ಎಂದು ಅಲ್ಲಿದ್ದವರಿಗೆ ಹೇಳಿದರು.</verse>
				<verse number="45">ಮರಿಯಳನ್ನು ನೋಡಲು ಬಂದಿದ್ದ ಹಲವು ಮಂದಿ ಯೆಹೂದ್ಯರು ನಡೆದ ಸಂಗತಿಯನ್ನು ನೋಡಿ ಯೇಸುವನ್ನು ವಿಶ್ವಾಸಿಸಿದರು.</verse>
				<verse number="46">ಕೆಲವರಾದರೋ ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ್ದೆಲ್ಲವನ್ನೂ ತಿಳಿಸಿದರು.</verse>
				<verse number="47">ಮುಖ್ಯಯಾಜಕರೂ ಫರಿಸಾಯರೂ ‘ನ್ಯಾಯಸಭೆ’ಯನ್ನು ಕರೆದರು. “ಈಗ ನಾವೇನು ಮಾಡೋಣ? ಈ ಮನುಷ್ಯನು ಎಷ್ಟೋ ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ;</verse>
				<verse number="48">ಇವನನ್ನು ಹೀಗೆಯೇ ಬಿಟ್ಟರೆ ಜನರೆಲ್ಲರೂ ಇವನನ್ನೇ ನಂಬುವರು, ರೋಮನರು ಬಂದು ನಮ್ಮ ಪವಿತ್ರ ದೇವಾಲಯವನ್ನೂ ರಾಷ್ಟ್ರವನ್ನೂ ನೆಲಸಮಮಾಡುವರು,” ಎಂದು ವಾದಿಸಿದರು.</verse>
				<verse number="49">ಆ ವರ್ಷ ಪ್ರಧಾನಯಾಜಕನಾಗಿದ್ದ ಕಾಯಫನು,</verse>
				<verse number="50">“ಇಡೀ ರಾಷ್ಟ್ರವೇ ನಿರ್ನಾಮವಾಗುವುದಕ್ಕಿಂತ ಜನತೆಗೋಸ್ಕರ ಒಬ್ಬನು ಸಾಯುವುದೇ ವಿಹಿತವೆಂದು ನಿಮಗೆ ಅರ್ಥವಾಗುತ್ತಿಲ್ಲವಲ್ಲಾ,” ಎಂದು ನುಡಿದನು.</verse>
				<verse number="51">ಇದನ್ನು ಅವನು ತಾನಾಗಿಯೇ ಹೇಳಲಿಲ್ಲ. ಆ ವರ್ಷ ಆತನು ಪ್ರಧಾನಯಾಜಕನಾಗಿದ್ದ ಕಾರಣ, ಯೇಸು ಜನತೆಗಾಗಿ ಪ್ರಾಣತ್ಯಾಗ ಮಾಡಲಿದ್ದಾರೆ ಎಂದು ಹೀಗೆ ಪ್ರವಾದಿಸಿದನು.</verse>
				<verse number="52">ಆ ಜನತೆಗಾಗಿ ಮಾತ್ರವಲ್ಲ, ಚದರಿಹೋಗಿದ್ದ ದೇವಜನರನ್ನು ಒಂದುಗೂಡಿಸುವ ಸಲುವಾಗಿಯೂ ಪ್ರಾಣತ್ಯಾಗ ಮಾಡಲಿದ್ದಾರೆಂಬುದು ಆ ಮಾತಿನ ಇಂಗಿತ.</verse>
				<verse number="53">ಅಂದಿನಿಂದಲೇ ಯೆಹೂದ್ಯ ಅಧಿಕಾರಿಗಳು ಯೇಸುವನ್ನು ಕೊಲ್ಲಬೇಕೆಂದು ನಿರ್ಧಾರ ಮಾಡಿಕೊಂಡರು.</verse>
				<verse number="54">ಎಂದೇ ಯೇಸು ಜುದೇಯದಲ್ಲಿ ಬಹಿರಂಗವಾಗಿ ಓಡಾಡುವುದನ್ನು ಕೈಬಿಟ್ಟರು. ಬೆಂಗಾಡಿನ ಪಕ್ಕದಲ್ಲಿದ್ದ ಪ್ರದೇಶಕ್ಕೆ ತೆರಳಿ ಎಫ್ರಯಿಮ್ ಎಂಬ ಗ್ರಾಮದಲ್ಲಿ ತಮ್ಮ ಶಿಷ್ಯರ ಸಂಗಡ ತಂಗಿದರು.</verse>
				<verse number="55">ಆಗ ಯೆಹೂದ್ಯರ ಪಾಸ್ಕಹಬ್ಬವು ಸಮೀಪಿಸಿತ್ತು. ಹಬ್ಬಕ್ಕೆ ಮುಂಚೆ ನಡೆಯುವ ಶುದ್ಧೀಕರಣಕ್ಕಾಗಿ ಹಲವರು ಜೆರುಸಲೇಮಿಗೆ ಗ್ರಾಮಾಂತರ ಪ್ರದೇಶಗಳಿಂದ ಮೊದಲೇ ಬಂದಿದ್ದರು.</verse>
				<verse number="56">ಯೇಸುವನ್ನು ನೋಡಬೇಕೆಂಬ ಆಶೆ ಅವರಿಗಿತ್ತು. “ಆತ ಹಬ್ಬಕ್ಕೆ ಬರುತ್ತಾನೋ ಇಲ್ಲವೋ ನಿಮ್ಮ ಎಣಿಕೆ ಏನು?” ಎಂದು ಮಹಾದೇವಾಲಯದಲ್ಲಿ ತಮ್ಮತಮ್ಮೊಳಗೆ ವಿಚಾರಿಸಿಕೊಳ್ಳುತ್ತಿದ್ದರು.</verse>
				<verse number="57">ಯೇಸುವನ್ನು ಬಂಧಿಸುವ ಉದ್ದೇಶದಿಂದ ಮುಖ್ಯಯಾಜಕರೂ ಫರಿಸಾಯರೂ ಆತನ ಸುಳಿವು ಯಾರಿಗಾದರೂ ಸಿಕ್ಕಿದ್ದೇ ಆದರೆ ತಮಗೆ ತಿಳಿಸಬೇಕೆಂದು ಆಜ್ಞೆ ಹೊರಡಿಸಿದ್ದರು.</verse>
			</chapter>
			<chapter number="12">
				<verse number="1">ಪಾಸ್ಕಹಬ್ಬಕ್ಕೆ ಇನ್ನೂ ಆರು ದಿನಗಳಿರುವಾಗ ಯೇಸು ಸ್ವಾಮಿ ಬೆಥಾನಿಯಕ್ಕೆ ಬಂದರು. ಅವರು ಲಾಸರನನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದ ಊರದು.</verse>
				<verse number="2">ಯೇಸುವಿಗೆ ಅಲ್ಲಿ ಒಂದು ಔತಣವನ್ನು ಏರ್ಪಡಿಸಲಾಗಿತ್ತು. ಮಾರ್ತಳು ಬಡಿಸುತ್ತಿದ್ದಳು. ಯೇಸುವಿನೊಡನೆ ಪಂಕ್ತಿಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಲಾಸರನೂ ಒಬ್ಬ.</verse>
				<verse number="3">ಆಗ ಮರಿಯಳು ಸುಮಾರು ಅರ್ಧ ಲೀಟರಿನಷ್ಟು, ಅತ್ಯಂತ ಬೆಲೆಬಾಳುವ ಅಚ್ಚ ಜಟಾಮಾಂಸಿ ಸುಗಂಧ ತೈಲವನ್ನು ತಂದು ಯೇಸುವಿನ ಪಾದಗಳಿಗೆ ಹಚ್ಚಿ, ತನ್ನ ತಲೆಗೂದಲಿನಿಂದ ಆ ಪಾದಗಳನ್ನು ಒರಸಿದಳು. ತೈಲದ ಸುವಾಸನೆ ಮನೆಯಲ್ಲೆಲ್ಲಾ ಹರಡಿತು.</verse>
				<verse number="4">ಯೇಸುವನ್ನು ಹಿಡಿದುಕೊಡಲಿದ್ದ ಹಾಗೂ ಶಿಷ್ಯರಲ್ಲಿ ಒಬ್ಬನಾಗಿದ್ದ ಇಸ್ಕರಿಯೋತಿನ ಯೂದನು,</verse>
				<verse number="5">“ಈ ಸುಗಂಧ ತೈಲವನ್ನು ಮುನ್ನೂರು ದೆನಾರಿ ನಾಣ್ಯಗಳಿಗೆ ಮಾರಿ, ಬಂದ ಹಣವನ್ನು ಬಡಬಗ್ಗರಿಗೆ ಕೊಡಬಹುದಿತ್ತಲ್ಲಾ?’ ಎಂದನು.</verse>
				<verse number="6">ಬಡವರ ಹಿತಚಿಂತನೆಯಿಂದೇನೂ ಅವನು ಹೀಗೆ ಹೇಳಲಿಲ್ಲ. ತನ್ನ ವಶದಲ್ಲಿ ಇಡಲಾಗಿದ್ದ ಹಣದ ಚೀಲದಿಂದ ಸ್ವಂತ ಉಪಯೋಗಕ್ಕಾಗಿ ಬಳಸುತ್ತಿದ್ದ ಕಳ್ಳ ಅವನು.</verse>
				<verse number="7">ಆಗ ಯೇಸು, “ಆಕೆಯ ಗೊಡವೆ ನಿನಗೆ ಬೇಡ. ನನ್ನ ಶವಸಂಸ್ಕಾರದ ದಿನಕ್ಕಾಗಿ ಆಕೆ ಅದನ್ನು ಇಟ್ಟುಕೊಳ್ಳಲಿ.</verse>
				<verse number="8">ಬಡಬಗ್ಗರು ನಿಮ್ಮ ಬಳಿಯಲ್ಲಿ ಯಾವಾಗಲೂ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿ ಇರುವುದಿಲ್ಲ,” ಎಂದರು.</verse>
				<verse number="9">ಯೇಸು ಸ್ವಾಮಿ ಅಲ್ಲಿರುವುದನ್ನು ಕೇಳಿ ಯೆಹೂದ್ಯರ ಒಂದು ದೊಡ್ಡ ಗುಂಪು ಬಂದಿತು. ಯೇಸುವನ್ನು ಮಾತ್ರವಲ್ಲ, ಅವರು ಸಾವಿನಿಂದ ಜೀವಕ್ಕೆ ಎಬ್ಬಿಸಿದ ಲಾಸರನನ್ನೂ ಕಾಣಲು ಆ ಜನರು ಅಲ್ಲಿಗೆ ಬಂದಿದ್ದರು.</verse>
				<verse number="10">ಲಾಸರನ ನಿಮಿತ್ತವಾಗಿ ಅನೇಕ ಯೆಹೂದ್ಯರು ತಮ್ಮನ್ನು ಬಿಟ್ಟು ಯೇಸುವಿನಲ್ಲಿ ನಂಬಿಕೆಯಿಟ್ಟ ಕಾರಣ ಲಾಸರನನ್ನು ಕೂಡ ಕೊಲ್ಲಬೇಕೆಂದು ಮುಖ್ಯಯಾಜಕರು ಆಲೋಚಿಸಿದರು.</verse>
				<verse number="11"></verse>
				<verse number="12">ಮಾರನೆಯ ದಿನ ಯೇಸು ಸ್ವಾಮಿ ಜೆರುಸಲೇಮಿಗೆ ಬರುತ್ತಿದ್ದಾರೆಂಬ ಸುದ್ದಿ ಹರಡಿತು.ಹಬ್ಬಕ್ಕೆ ಬಂದು ನೆರೆದಿದ್ದ ಜನಸಮೂಹಕ್ಕೆ ಈ ಸುದ್ದಿ ಮುಟ್ಟಿತು.</verse>
				<verse number="13">ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಅವರು ಯೇಸುವನ್ನು ಎದುರುಗೊಳ್ಳಲು ಹೊರಟರು. ‘ಸರ್ವೇಶ್ವರನ ನಾಮದಲ್ಲಿ ಬರುವಾತನಿಗೆ ಜಯಜಯವಾಗಲಿ! ಇಸ್ರಯೇಲಿನ ಅರಸನಿಗೆ ಶುಭವಾಗಲಿ!’ ಎಂದು ಘೋಷಿಸುತ್ತಾ ಅವರನ್ನು ಸ್ವಾಗತಿಸಿದರು.</verse>
				<verse number="14">ಯೇಸು ದಾರಿಯಲ್ಲಿದ್ದ ಪ್ರಾಯದ ಹೇಸರಗತ್ತೆಯೊಂದನ್ನು ಹತ್ತಿಹೊರಟರು.</verse>
				<verse number="15">ಇದನ್ನು ಕುರಿತೇ, ‘ಸಿಯೋನ್ ನಗರಿಯೇ, ಅಂಜಬೇಡ. ಇಗೋ ನೋಡು; ಹೇಸರಗತ್ತೆಯನ್ನೇರಿ ಬರುತ್ತಿರುವನು ನಿನ್ನ ಅರಸನು’ ಎಂದಿದೆ ಪವಿತ್ರಗ್ರಂಥ.</verse>
				<verse number="16">ಇದೆಲ್ಲ ಶಿಷ್ಯರಿಗೆ ಆಗ ಅರ್ಥವಾಗಲಿಲ್ಲ. ಇದೆಲ್ಲವನ್ನೂ ಬರೆದದ್ದು ಅವರನ್ನು ಕುರಿತೇ; ಆ ಪ್ರಕಾರವೇ ನೆರವೇರಿದೆ ಎಂಬುದನ್ನು ಯೇಸು ಮಹಿಮಾಪದವಿಯನ್ನು ಪಡೆದಾದ ಮೇಲೆ ಅವರು ನೆನಪಿಗೆ ತಂದುಕೊಂಡರು.</verse>
				<verse number="17">ಇದಲ್ಲದೆ ಯೇಸು ಲಾಸರನನ್ನು ಸಮಾಧಿಯಿಂದ ಹೊರಗೆ ಕರೆದು ಸಾವಿನಿಂದ ಜೀವಕ್ಕೆ ಎಬ್ಬಿಸಿದಾಗ ಅವರ ಸಂಗಡ ಇದ್ದವರು ನಡೆದ ವಿಷಯವನ್ನು ಇತರರಿಗೆ ಸಾರುತ್ತಿದ್ದರು.</verse>
				<verse number="18">ಈ ಸೂಚಕಕಾರ್ಯವನ್ನು ಕೇಳಿದ್ದ ಕಾರಣದಿಂದಲೂ ಜನರು ಯೇಸುವನ್ನು ಎದುರುಗೊಳ್ಳಲು ಹೋಗಿದ್ದರು.</verse>
				<verse number="19">ಇದನ್ನೆಲ್ಲಾ ಕಂಡ ಫರಿಸಾಯರು ತಮ್ಮತಮ್ಮೊಳಗೆ, “ನೋಡಿದಿರಾ? ನಮ್ಮ ಕೈಯಿಂದ ಏನೂ ಆಗಲಿಲ್ಲ. ಇಡೀ ಜಗತ್ತೇ ಅವನ ಹಿಂದೆ ಹೋಗುತ್ತಿದೆಯಲ್ಲಾ!” ಎಂದುಕೊಂಡರು.</verse>
				<verse number="20">ಆರಾಧನೆಗೆಂದು ಹಬ್ಬಕ್ಕೆ ಬಂದಿದ್ದವರಲ್ಲಿ ಕೆಲವರು ಗ್ರೀಕರು.</verse>
				<verse number="21">ಇವರು ಗಲಿಲೇಯದ ಬೆತ್ಸಾಯಿದ ಎಂಬ ಊರಿನವನಾದ ಫಿಲಿಪ್ಪನ ಬಳಿಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆ,” ಎಂದು ಕೇಳಿಕೊಂಡರು.</verse>
				<verse number="22">ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅವರಿಬ್ಬರೂ ಹೋಗಿ ಯೇಸುವಿಗೆ ಈ ವಿಷಯವನ್ನು ತಿಳಿಸಿದರು.</verse>
				<verse number="23">ಅದಕ್ಕೆ ಯೇಸು, “ನರಪುತ್ರನು ಮಹಿಮೆಯನ್ನು ಹೊಂದುವ ಗಳಿಗೆ ಬಂದಿದೆ.</verse>
				<verse number="24">ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಗೋದಿಯಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಅದು ಒಂಟಿಯಾಗಿ ಉಳಿಯುತ್ತದೆ; ಅದು ಸತ್ತರೆ ಮಾತ್ರ ಸಮೃದ್ಧಿಯಾದ ಫಲವನ್ನು ಕೊಡುತ್ತದೆ.</verse>
				<verse number="25">ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುತ್ತಾನೆ. ತನ್ನ ಪ್ರಾಣವನ್ನು ಈ ಲೋಕದಲ್ಲಿ ದ್ವೇಷಿಸುವವನು ಅದನ್ನು ನಿತ್ಯಜೀವಕ್ಕಾಗಿ ಕಾಯ್ದಿರಿಸಿಕೊಳ್ಳುತ್ತಾನೆ.</verse>
				<verse number="26">ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು</verse>
				<verse number="27">ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ, “ಈಗ ನನ್ನಾತ್ಮ ತತ್ತರಿಸುತ್ತಿದೆ. ನಾನು ಏನೆಂದು ಹೇಳಲಿ? ‘ಪಿತನೇ, ಈ ಗಳಿಗೆಯಿಂದ ನನ್ನನ್ನು ಕಾಪಾಡು ಎನ್ನಲೇ?’ ಇಲ್ಲ, ಅದಕ್ಕೆ ಬದಲಾಗಿ ಇದನ್ನು ಅನುಭವಿಸಲೆಂದೇ ನಾನು ಈ ಗಳಿಗೆಗೆ ಕಾಲಿಟ್ಟಿದ್ದೇನೆ.</verse>
				<verse number="28">‘ಪಿತನೇ, ನಿಮ್ಮ ನಾಮ ಮಹಿಮೆಯನ್ನು ಬೆಳಗಿಸಿ’ “ ಎಂದು ನುಡಿದರು. ಆಗ, “ಹೌದು, ಆ ಮಹಿಮೆಯನ್ನು ಬೆಳಗಿಸಿದ್ದೇನೆ, ಪುನಃ ಬೆಳಗಿಸುತ್ತೇನೆ,” ಎಂಬ ಸ್ವರ್ಗೀಯ ವಾಣಿ ಕೇಳಿಸಿತು.</verse>
				<verse number="29">ಅಲ್ಲಿ ನಿಂತುಕೊಂಡಿದ್ದ ಜನರು ಆ ವಾಣಿಯನ್ನು ಕೇಳಿ, “ಇದೇನು ಗುಡುಗಿನ ಸದ್ದು?” ಎಂದರು. ಕೆಲವರು, “ದೇವದೂತನೊಬ್ಬ ಆತನೊಡನೆ ಮಾತನಾಡಿದನು,” ಎಂದರು.</verse>
				<verse number="30">ಯೇಸು ಸ್ವಾಮಿ, “ಈ ವಾಣಿಯಾದುದು ನಿಮಗಾಗಿ, ನನಗಾಗಿ ಅಲ್ಲ.</verse>
				<verse number="31">ಈಗ ಈ ಲೋಕವು ನ್ಯಾಯತೀರ್ಪಿಗೆ ಒಳಗಾಗುವುದು. ಇದೀಗಲೇ ಈ ಲೋಕಾಧಿಪತಿಯನ್ನು ಹೊರದೂಡಲಾಗುವುದು.</verse>
				<verse number="32">ಆದರೆ ನನ್ನನ್ನು ಭೂಮಿಯಿಂದ ಮೇಲೇರಿಸಿದಾಗ, ನಾನು ಎಲ್ಲರನ್ನು ನನ್ನೆಡೆಗೆ ಸೆಳೆದುಕೊಳ್ಳುತ್ತೇನೆ,” ಎಂದು ನುಡಿದರು.</verse>
				<verse number="33">ಈ ಮಾತಿನಿಂದ ತಮಗೆಂಥ ಮರಣ ಕಾದಿದೆಯೆಂದು ಸೂಚಿಸಿದರು.</verse>
				<verse number="34">ನೆರೆದಿದ್ದ ಜನರು ಪ್ರತ್ಯುತ್ತರವಾಗಿ, “ಅಭಿಷಿಕ್ತನಾದ ಲೋಕೋದ್ಧಾರಕ ಸದಾಕಾಲ ಇರುವನೆಂದು ಧರ್ಮಶಾಸ್ತ್ರವೇ ತಿಳಿಸುತ್ತದೆ. ಹೀಗಿರುವಲ್ಲಿ, ನರಪುತ್ರನನ್ನು ಮೇಲೇರಿಸಬೇಕಾಗಿದೆ ಎಂದು ನೀನು ಹೇಳುತ್ತೀಯಲ್ಲಾ, ಅದು ಹೇಗೆ? ಆ ನರಪುತ್ರನು ಯಾರು?” ಎಂದು ಕೇಳಿದರು.</verse>
				<verse number="35">ಅದಕ್ಕೆ ಯೇಸು, “ಇನ್ನು ತುಸುಕಾಲ ಮಾತ್ರ ಜ್ಯೋತಿ ನಿಮ್ಮ ನಡುವೆ ಇರುತ್ತದೆ. ನಿಮ್ಮನ್ನು ಕತ್ತಲು ಕವಿಯದಂತೆ ಜ್ಯೋತಿಯಿರುವಾಗಲೇ ನಡೆಯಿರಿ. ಕತ್ತಲಲ್ಲಿ ನಡೆಯುವವನಿಗೆ ಗೊತ್ತುಗುರಿ ಕಾಣದು.</verse>
				<verse number="36">ನಿಮ್ಮೊಡನೆ ಇನ್ನೂ ಜ್ಯೋತಿ ಇರುವುದರಿಂದ ಆ ಜ್ಯೋತಿಯಲ್ಲಿ ನಂಬಿಕೆಯಿಡಿ. ಆಗ ನೀವು ಜ್ಯೋತಿಯ ಮಕ್ಕಳು ಆಗುವಿರಿ,” ಎಂದರು. ಇದನ್ನು ಕೇಳಿದ ತರುವಾಯ ಯೇಸು ಅಲ್ಲಿಂದ ಹೊರಟು ಜನರ ಕಣ್ಣಿಗೆ ಬೀಳದಂತೆ ಮರೆಯಾದರು.</verse>
				<verse number="37">ಯೇಸು ಸ್ವಾಮಿ ಬಹುತೇಕ ಸೂಚಕಕಾರ್ಯಗಳನ್ನು ಜನರ ಕಣ್ಮುಂದೆ ಮಾಡಿದರೂ ಆ ಜನರು ಅವರನ್ನು ವಿಶ್ವಾಸಿಸದೆಹೋದರು.</verse>
				<verse number="38">ಹೀಗೆ ಯೆಶಾಯ ಪ್ರವಾದಿಯ ಈ ಮಾತು ನೆರವೇರಿತು: “ಸರ್ವೇಶ್ವರಾ, ನಮ್ಮ ಸಂದೇಶವನ್ನು ನಂಬಿದವರಾರು? ದೇವರ ಶಕ್ತಿಸಾಮರ್ಥ್ಯ ಗೋಚರವಾದುದು ಯಾರಿಗೆ?”</verse>
				<verse number="39">ಜನರು ವಿಶ್ವಾಸಿಸದೆ ಹೋದುದಕ್ಕೆ ಯೆಶಾಯನು ಮತ್ತೊಂದು ವಚನದಲ್ಲಿ ಕಾರಣವನ್ನು ಸೂಚಿಸಿದ್ದಾನೆ:</verse>
				<verse number="40">“ತಮ್ಮ ಕಣ್ಣುಗಳಿಂದ ಅವರು ಕಾಣದಂತೆಯೂ ತಮ್ಮ ಮನದಿಂದ ಗ್ರಹಿಸದಂತೆಯೂ ಹಾಗೂ ಮನತಿರುಗಿ ನನ್ನಿಂದ ಗುಣಹೊಂದದಂತೆಯೂ ಅವರ ಕಣ್ಣುಗಳನ್ನು ಕುರುಡಾಗಿಸಿರುವರು; ಅವರ ಮನಸ್ಸನ್ನು ಕಲ್ಲಾಗಿಸಿರುವರು ದೇವರು.”</verse>
				<verse number="41">ಯೇಸುವಿನ ಮಹಿಮೆಯನ್ನು ಮನಗಂಡು, ಅವರನ್ನು ಕುರಿತು ಮಾತನಾಡುವಾಗ ಯೆಶಾಯನು ಹೇಳಿದ ಮಾತುಗಳಿವು.</verse>
				<verse number="42">ಯೆಹೂದ್ಯರಲ್ಲಿ ಹಲವುಮಂದಿ ಮುಖಂಡರಿಗೆ ಯೇಸುವಿನಲ್ಲಿ ವಿಶ್ವಾಸಮೂಡಿತು. ಆದರೆ ಫರಿಸಾಯರು ಪ್ರಾರ್ಥನಾಮಂದಿರಗಳಿಂದ ತಮಗೆ ಬಹಿಷ್ಕಾರ ಹಾಕಿಯಾರೆಂಬ ಅಂಜಿಕೆಯ ಕಾರಣ ಅವರು ತಮ್ಮ ವಿಶ್ವಾಸವನ್ನು ಬಯಲುಮಾಡಲಿಲ್ಲ.</verse>
				<verse number="43">ದೇವರಿಂದ ದೊರಕುವ ಮನ್ನಣೆಗಿಂತ ಮಾನವರಿಂದ ಸಿಗುವ ಮನ್ನಣೆಯೇ ಅವರಿಗೆ ಪ್ರಿಯವಾಗಿತ್ತು.</verse>
				<verse number="44">ಯೇಸು ಸ್ವಾಮಿ ಗಟ್ಟಿಯಾಗಿ ಕೂಗಿ ಇಂತೆಂದರು: “ನನ್ನಲ್ಲಿ ವಿಶ್ವಾಸವಿಡುವವನು ನನ್ನಲ್ಲಿ ಅಲ್ಲ, ನನ್ನನ್ನು ಕಳುಹಿಸಿದಾತನಲ್ಲೇ ವಿಶ್ವಾಸವಿಡುತ್ತಾನೆ.</verse>
				<verse number="45">ನನ್ನನ್ನು ಕಾಣುವವನು ನನ್ನನ್ನು ಕಳುಹಿಸಿದಾತನನ್ನೇ ಕಾಣುತ್ತಾನೆ.</verse>
				<verse number="46">ನನ್ನಲ್ಲಿ ವಿಶ್ವಾಸವಿಡುವವನು ಅಂಧಕಾರದಲ್ಲಿ ಉಳಿಯಬಾರದೆಂದು ನಾನೇ ಜಗಜ್ಯೋತಿಯಾಗಿ ಬಂದಿದ್ದೇನೆ.</verse>
				<verse number="47">ಯಾವನಾದರೂ ನನ್ನ ಮಾತನ್ನು ಕೇಳಿಯೂ ಅದರಂತೆ ನಡೆಯದೆಹೋದರೆ ಅಂಥವನಿಗೆ ತೀರ್ಪುಕೊಡುವವನು ನಾನಲ್ಲ. ನಾನು ಬಂದುದು ಲೋಕದ ಉದ್ಧಾರಕ್ಕಾಗಿ, ತೀರ್ಪುಕೊಡುವುದಕ್ಕಾಗಿ ಅಲ್ಲ.</verse>
				<verse number="48">ನನ್ನನ್ನು ನಿರಾಕರಿಸಿ ನನ್ನ ಮಾತುಗಳನ್ನು ಅಂಗೀಕರಿಸದೆ ಹೋದವನಿಗೆ ತೀರ್ಪುಕೊಡುವಂಥದ್ದು ಒಂದು ಇದೆ.</verse>
				<verse number="49">ಅದು ಯಾವುದೆಂದರೆ ನಾನು ಆಡಿದ ಮಾತೇ. ಅಂತಿಮ ದಿನದಂದು ಅದೇ ಅವನಿಗೆ ತೀರ್ಪುಕೊಡುವುದು. ಏಕೆಂದರೆ, ನನ್ನಷ್ಟಕ್ಕೆ ನಾನೇ ಇದನ್ನೆಲ್ಲಾ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿದ ಪಿತನೇ, ನಾನು ಏನು ಹೇಳಬೇಕು, ಯಾವ ಮಾತನ್ನು ಆಡಬೇಕು ಎಂದು ನನಗೆ ಆಜ್ಞೆಮಾಡಿದ್ದಾರೆ.</verse>
				<verse number="50">ಅವರ ಆಜ್ಞೆಯೇ ನಿತ್ಯಜೀವದಾಯಕ ಎಂದು ನಾನು ಬಲ್ಲೆ. ಆದ್ದರಿಂದಲೇ ಪಿತನು ಹೇಳಿದಂತೆಯೇ ನಾನು ಮಾತನಾಡುತ್ತೇನೆ.”</verse>
			</chapter>
			<chapter number="13">
				<verse number="1">ಅಂದು ಪಾಸ್ಕಹಬ್ಬದ ಹಿಂದಿನ ದಿನ. ತಾವು ಈ ಲೋಕವನ್ನು ಬಿಟ್ಟು ಪಿತನ ಬಳಿಗೆ ಹೋಗಬೇಕಾದ ಗಳಿಗೆ ಬಂದಿರುವುದು ಎಂದು ಯೇಸು ಸ್ವಾಮಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತಮ್ಮವರನ್ನು ಯಾವಾಗಲೂ ಪ್ರೀತಿಸುತ್ತಿದ್ದ ಅವರು ಆ ಪ್ರೀತಿಯ ಪರಮಾವಧಿಯನ್ನು ಈಗ ತೋರಿಸಲಿದ್ದರು.</verse>
				<verse number="2">(ಯೇಸುವನ್ನು ಗುರುದ್ರೋಹದಿಂದ ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಸೈತಾನನು ಸಿಮೋನನ ಮಗ ಇಸ್ಕರಿಯೋತಿನ ಯೂದನಲ್ಲಿ ಈಗಾಗಲೇ ಹುಟ್ಟಿಸಿದ್ದನು).</verse>
				<verse number="3">ಊಟಕ್ಕೆ ಎಲ್ಲರೂ ಕುಳಿತಿದ್ದರು. ಪಿತನು ಎಲ್ಲವನ್ನೂ ತಮ್ಮ ಕೈಗೆ ಒಪ್ಪಿಸಿರುವರೆಂದೂ ತಾವು ದೇವರ ಬಳಿಯಿಂದ ಬಂದಿದ್ದು, ಈಗ ದೇವರ ಬಳಿಗೇ ಮರಳುತ್ತಿದ್ದೆನೆಂದೂ ಯೇಸುವಿಗೆ ತಿಳಿದಿತ್ತು.</verse>
				<verse number="4">ಅವರು ಊಟದಿಂದ ಎದ್ದು, ತಮ್ಮ ಮೇಲುಹೊದಿಕೆಯನ್ನು ತೆಗೆದಿಟ್ಟರು. ಅಂಗವಸ್ತ್ರವನ್ನು ಸೊಂಟಕ್ಕೆ ಕಟ್ಟಿಕೊಂಡರು.</verse>
				<verse number="5">ಅನಂತರ ಒಂದು ಬೋಗುಣಿಗೆ ನೀರು ಸುರಿದುಕೊಂಡು ತಮ್ಮ ಶಿಷ್ಯರ ಕಾಲುಗಳನ್ನು ತೊಳೆಯುತ್ತಾ ತಾವು ಕಟ್ಟಿಕೊಂಡಿದ್ದ ಅಂಗವಸ್ತ್ರದಿಂದ ಒರಸತೊಡಗಿದರು.</verse>
				<verse number="6">ಹೀಗೆ, ಅವರು ಸಿಮೋನ ಪೇತ್ರನ ಹತ್ತಿರಕ್ಕೆ ಬಂದಾಗ ಆತ, “ಪ್ರಭುವೇ, ನೀವು ನನ್ನ ಕಾಲುಗಳನ್ನು ತೊಳೆಯುವುದೇ?” ಎಂದನು.</verse>
				<verse number="7">ಯೇಸು, “ನಾನು ಮಾಡುತ್ತಿರುವುದು ನಿನಗೆ ಈಗ ಅರ್ಥವಾಗದು, ಮುಂದೆ ಅರ್ಥವಾಗುತ್ತದೆ,” ಎಂದು ಉತ್ತರಿಸಿದರು.</verse>
				<verse number="8">“ನೀವು ನನ್ನ ಕಾಲುಗಳನ್ನು ತೊಳೆಯುವುದು ಎಂದಿಗೂ ಕೂಡದು,” ಎಂದು ಪೇತ್ರನು ಪ್ರತಿಭಟಿಸಿದನು. ಅದಕ್ಕೆ ಯೇಸು, “ನಾನು ತೊಳೆಯದಿದ್ದರೆ ನಿನಗೆ ನನ್ನಲ್ಲಿ ಪಾಲು ಇಲ್ಲ,” ಎಂದು ನುಡಿದರು.</verse>
				<verse number="9">ಆಗ ಪೇತ್ರನು, “ಹಾಗಾದರೆ ಪ್ರಭೂ, ನನ್ನ ಕಾಲುಗಳನ್ನು ಮಾತ್ರವಲ್ಲ, ನನ್ನ ಕೈಗಳನ್ನೂ ತಲೆಯನ್ನೂ ತೊಳೆಯಿರಿ, ಎಂದನು.</verse>
				<verse number="10">ಯೇಸು, “ಸ್ನಾನಮಾಡಿಕೊಂಡವನು ಕಾಲುಗಳನ್ನು ತೊಳೆದುಕೊಂಡರೆ ಸಾಕು, ಅವನ ಮೈಯೆಲ್ಲಾ ಶುದ್ಧವಾಗಿರುತ್ತದೆ. ನೀವೂ ಕೂಡ ಶುದ್ಧರಾಗಿದ್ದೀರಿ. ಆದರೆ ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,” ಎಂದು ಹೇಳಿದರು.</verse>
				<verse number="11">ತಮ್ಮನ್ನು ಗುರುದ್ರೋಹದಿಂದ ಹಿಡಿದುಕೊಡುವವನು ಯಾರೆಂಬುದು ಅವರಿಗೆ ಗೊತ್ತಿತ್ತು. ಅದಕ್ಕಾಗಿಯೇ ಅವರು, ‘ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ,’ ಎಂದು ಹೇಳಿದರು.</verse>
				<verse number="12">ಶಿಷ್ಯರ ಪಾದಗಳನ್ನು ತೊಳೆದ ಮೇಲೆ ಯೇಸು ತಮ್ಮ ಮೇಲುಹೊದಿಕೆಯನ್ನು ಹಾಕಿಕೊಂಡು ಕುಳಿತುಕೊಂಡರು. ತಮ್ಮ ಶಿಷ್ಯರಿಗೆ, “ನಿಮಗೆ, ನಾನು ಮಾಡಿರುವುದು ಏನೆಂದು ಅರ್ಥವಾಯಿತೇ?</verse>
				<verse number="13">‘ಬೋಧಕರೇ, ಪ್ರಭುವೇ’ ಎಂದು ನೀವು ನನ್ನನ್ನು ಕರೆಯುತ್ತೀರಿ; ನೀವು ಹಾಗೆ ಹೇಳುವುದು ಸರಿಯೆ. ನಾನು ಬೋಧಕನೂ ಹೌದು, ಪ್ರಭುವೂ ಹೌದು.</verse>
				<verse number="14">ನಿಮಗೆ ಪ್ರಭೂವೂ ಬೋಧಕನೂ ಆಗಿರುವ ನಾನೇ ನಿಮ್ಮ ಕಾಲುಗಳನ್ನು ತೊಳೆದಿರುವಾಗ ನೀವು ಸಹ ಒಬ್ಬರ ಕಾಲುಗಳನ್ನು ಇನ್ನೊಬ್ಬರು ತೊಳೆಯುವ ಹಂಗಿನಲ್ಲಿದ್ದೀರಿ.</verse>
				<verse number="15">ನಾನು ನಿಮಗೆ ಒಂದು ಆದರ್ಶವನ್ನು ಕೊಟ್ಟಿದ್ದೇನೆ. ನಾನು ನಿಮಗೆ ಮಾಡಿದಂತೆಯೇ ನೀವೂ ಇತರರಿಗೆ ಮಾಡಿರಿ.</verse>
				<verse number="16">ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ಧಣಿಗಿಂತ ದಾಸನು ದೊಡ್ಡವನಲ್ಲ. ಅಂತೆಯೇ ಕಳುಹಿಸಲಾದವನು ಕಳುಹಿಸುವವನಿಗಿಂತ ಶ್ರೇಷ್ಠನಲ್ಲ.</verse>
				<verse number="17">ಇದನ್ನೆಲ್ಲಾ ಅರ್ಥಮಾಡಿಕೊಂಡು ಅದರಂತೆ ನಡೆದರೆ, ನೀವು ಧನ್ಯರು!</verse>
				<verse number="18">“ನಾನು ನಿಮ್ಮೆಲ್ಲರನ್ನೂ ಕುರಿತು ಹೀಗೆ ಹೇಳುತ್ತಾ ಇಲ್ಲ. ಯಾರನ್ನು ನಾನು ಆರಿಸಿಕೊಂಡಿದ್ದೇನೆಂಬುದು ನನಗೆ ಗೊತ್ತು. ಆದರೆ ‘ನನ್ನೊಡನೆ ಉಂಡವನೇ ನನಗೆ ದ್ರೋಹ ಬಗೆದನು’ ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿದೆ. ಆ ಮಾತು ಈಡೇರಬೇಕಾಗಿದೆ.</verse>
				<verse number="19">ಅದು ಈಡೇರುವಾಗ ‘ಇರುವಾತನು ನಾನೇ’ ಎಂದು ನೀವು ವಿಶ್ವಾಸಿಸುವಂತೆ ಅದು ಈಡೇರುವುದಕ್ಕೆ ಮುಂಚೆಯೇ ನಿಮಗೆ ಹೇಳುತ್ತಿದ್ದೇನೆ.</verse>
				<verse number="20">ನಾನು ಕಳುಹಿಸಿದಾತನನ್ನು ಬರಮಾಡಿಕೊಳ್ಳುವವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ. ನನ್ನನ್ನು ಬರಮಾಡಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.</verse>
				<verse number="21">ಇದೆಲ್ಲವನ್ನೂ ಹೇಳಿಯಾದ ಮೇಲೆ ಯೇಸು ಸ್ವಾಮಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಅವರು, “ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನಿಮ್ಮಲ್ಲೊಬ್ಬನು ದ್ರೋಹ ಬಗೆದು ನನ್ನನ್ನು ಹಿಡಿದೊಪ್ಪಿಸುವನು,” ಎಂದು ಸ್ಪಷ್ಟವಾಗಿ ಹೇಳಿದರು.</verse>
				<verse number="22">ಯೇಸು ಯಾರನ್ನು ಕುರಿತು ಹಾಗೆಂದರೆಂದು ತಿಳಿಯದೆ ಶಿಷ್ಯರು ಒಬ್ಬರನ್ನೊಬ್ಬರು ಸಂಶಯದಿಂದ ನೋಡುವವರಾದರು.</verse>
				<verse number="23">ಯೇಸುವಿನ ಪಕ್ಕದಲ್ಲೇ ಒರಗಿಕುಳಿತಿದ್ದ ಅವರ ಆಪ್ತ ಶಿಷ್ಯನಿಗೆ,</verse>
				<verse number="24">ಸಿಮೋನಪೇತ್ರನು, “ಯಾರನ್ನು ಕುರಿತು ಹಾಗೆ ಹೇಳುತ್ತಿದ್ದಾರೆಂದು ಕೇಳು,” ಎಂದು ಸನ್ನೆಮಾಡಿದನು.</verse>
				<verse number="25">ಆಗ ಆ ಶಿಷ್ಯನು, ಯೇಸುವಿನ ಮಗ್ಗುಲಿಗೆ ಸರಿದು, “ಅಂಥವನು ಯಾರು ಪ್ರಭೂ?’ ಎಂದು ಕೇಳಿದನು.</verse>
				<verse number="26">ಯೇಸು, “ನಾನು ರೊಟ್ಟಿಯ ತುಂಡನ್ನು ಬಟ್ಟಲಿನಲ್ಲಿ ಅದ್ದಿ ಅದನ್ನು ಯಾರಿಗೆಕೊಡುತ್ತೇನೋ ಅವನೇ,” ಎಂದು ಹೇಳಿ ರೊಟ್ಟಿಯ ತುಂಡನ್ನು ಅದ್ದಿ ಸಿಮೋನನ ಮಗ ಇಸ್ಕರಿಯೋತಿನ ಯೂದನಿಗೆ ಕೊಟ್ಟರು.</verse>
				<verse number="27">ಯೂದನು ಅದನ್ನು ತೆಗೆದುಕೊಂಡದ್ದೇ ತಡ, ಸೈತಾನನು ಅವನನ್ನು ಹೊಕ್ಕನು.</verse>
				<verse number="28">ಆಗ ಯೇಸು, “ನೀನು ಮಾಡಬೇಕೆಂದಿರುವುದನ್ನು ಬೇಗನೆ ಮಾಡಿಮುಗಿಸು,” ಎಂದರು. ಊಟಕ್ಕೆ ಕುಳಿತಿದ್ದ ಶಿಷ್ಯರಿಗೆ, ಯೇಸು ಹಾಗೇಕೆ ಹೇಳಿದರೆಂದು ಅರ್ಥವಾಗಲಿಲ್ಲ.</verse>
				<verse number="29">ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ, ‘ಹಬ್ಬಕ್ಕೆ ನಮಗೆ ಬೇಕಾದುದನ್ನು ಕೊಂಡು ಬಾ,’ ಎಂದೋ, ‘ಬಡವರಿಗೆ ಏನಾದರೂ ಕೊಡು’ ಎಂದೋ, ಯೇಸು ಹೇಳಿರಬೇಕೆಂದು ಕೆಲವು ಶಿಷ್ಯರು ಭಾವಿಸಿದರು.</verse>
				<verse number="30">ಆ ರೊಟ್ಟಿಯ ತುಂಡನ್ನು ತೆಗೆದುಕೊಂಡಕೂಡಲೇ ಯೂದನು ಎದ್ದು ಹೊರಟುಹೋದನು; ಆಗ ರಾತ್ರಿಯಾಗಿತ್ತು.</verse>
				<verse number="31">ಯೂದನು ಹೊರಟುಹೋದಮೇಲೆ ಯೇಸು ಸ್ವಾಮಿ ಹೀಗೆಂದರು: “ಈಗ ನರಪುತ್ರನ ಮಹಿಮೆ ಪ್ರಕಟವಾಗುವುದು. ಆತನಲ್ಲಿ ದೇವರ ಮಹಿಮೆಯೂ ಪ್ರಕಟವಾಗುವುದು.</verse>
				<verse number="32">ದೇವರ ಮಹಿಮೆ ಆತನಲ್ಲಿ ಪ್ರಕಟವಾದರೆ, ದೇವರೇ ನರಪುತ್ರನ ಮಹಿಮೆಯನ್ನು ತಮ್ಮಲ್ಲಿ ಪ್ರಕಟಪಡಿಸುವರು. ತಕ್ಷಣವೇ ಪ್ರಕಟಪಡಿಸುವರು.</verse>
				<verse number="33">ಪ್ರಿಯ ಮಕ್ಕಳೇ, ಇನ್ನು ತುಸುಕಾಲ ಮಾತ್ರ ನಾನು ನಿಮ್ಮೊಡನೆ ಇರುತ್ತೇನೆ, ಆಮೇಲೆ ನೀವು ನನ್ನನ್ನು ಹುಡುಕುವಿರಿ, ‘ಆದರೆ ನಾನು ಹೋಗುವಲ್ಲಿಗೆ ನೀವು ಬರಲಾರಿರಿ’ ಎಂದು ನಾನು ಯೆಹೂದ್ಯರಿಗೆ ಹೇಳಿದಂತೆಯೇ ನಿಮಗೂ ಹೇಳುತ್ತೇನೆ.</verse>
				<verse number="34">ನಿಮಗೊಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಒಬ್ಬರನ್ನೊಬ್ಬರು ಪ್ರೀತಿಸಿರಿ. ನಾನು ನಿಮ್ಮನ್ನು ಪ್ರಿತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಿರಿ.</verse>
				<verse number="35">ನಿಮ್ಮ ಈ ಪರಸ್ಪರ ಪ್ರೀತಿಯನ್ನು ಕಂಡು ನೀವು ನನ್ನ ಶಿಷ್ಯರೆಂದು ಜನರೆಲ್ಲರೂ ಅರಿತುಕೊಳ್ಳುವರು.</verse>
				<verse number="36">ಆಗ ಸಿಮೋನ ಪೇತ್ರನು, “ಪ್ರಭುವೇ, ನೀವು ಹೋಗುವುದಾದರೂ ಎಲ್ಲಿಗೆ?” ಎಂದು ಕೇಳಿದನು. “ನಾನು ಹೋಗುವಲ್ಲಿಗೆ ನೀನು ಈಗ ಬರಲಾರೆ. ಅನಂತರ ಬರುವೆ,” ಎಂದು ಯೇಸು ಉತ್ತರಕೊಡಲು</verse>
				<verse number="37">ಪೇತ್ರನು, “ಈಗಲೇ ನಿಮ್ಮ ಹಿಂದೆಬರಲು ಏಕಾಗದು? ಪ್ರಭೂ, ನಿಮಗಾಗಿ ಪ್ರಾಣವನ್ನು ಕೊಡಲೂ ಸಿದ್ಧನಿದ್ದೇನೆ,” ಎಂದನು.</verse>
				<verse number="38">ಆಗ ಯೇಸು, “ನನಗಾಗಿ ಪ್ರಾಣವನ್ನುಕೊಡಲು ಸಿದ್ಧನಿರುವೆಯಾ? ನಾನು ನಿನಗೆ ನಿಜವಾಗಿ ಹೇಳುತ್ತೇನೆ ಕೇಳು: ನೀನು ನನ್ನನ್ನು ಅರಿಯೆನೆಂದು ಮೂರುಬಾರಿ ತಿರಸ್ಕರಿಸುವ ತನಕ ನಾಳೆ ಮುಂಜಾನೆ ಕೋಳಿ ಕೂಗುವುದಿಲ್ಲ,” ಎಂದು ನುಡಿದರು.</verse>
			</chapter>
			<chapter number="14">
				<verse number="1">ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ ಶಿಷ್ಯರಿಗೆ, “ನೀವು ಹೃದಯದಲ್ಲಿ ಕಳವಳಗೊಳ್ಳದಿರಿ; ದೇವರಲ್ಲಿ ವಿಶ್ವಾಸವಿಡಿ; ನನ್ನಲ್ಲಿಯೂ ವಿಶ್ವಾಸವಿಡಿ.</verse>
				<verse number="2">ನನ್ನ ಪಿತನ ಆಸ್ಥಾನದಲ್ಲಿ ಅನೇಕ ನಿವಾಸಗಳು ಇವೆ. ಹಾಗಿಲ್ಲದ ಪಕ್ಷದಲ್ಲಿ ನಿಮಗೆ ತಿಳಿಸುತ್ತಿದ್ದೆ. ನಾನು ಹೋಗಿ ನಿಮಗೆ ಸ್ಥಳವನ್ನು ಅಣಿಗೊಳಿಸುತ್ತೇನೆ.</verse>
				<verse number="3">ಅಣಿಗೊಳಿಸಿದ ಬಳಿಕ ಹಿಂದಿರುಗಿ ಬಂದು ನಿಮ್ಮನ್ನು ಕರೆದೊಯ್ಯುತ್ತೇನೆ. ನಾನಿರುವೆಡೆಯಲ್ಲಿಯೇ ನೀವೂ ಇರಬೇಕು.</verse>
				<verse number="4">ನಾನು ಹೋಗುವ ಎಡೆಗೆ ಮಾರ್ಗವು ನಿಮಗೆ ತಿಳಿದೇ ಇದೆ,” ಎಂದು ಹೇಳಿದರು.</verse>
				<verse number="5">ಆಗ ತೋಮನು, “ಪ್ರಭುವೇ, ನೀವು ಎಲ್ಲಿಗೆ ಹೋಗುತ್ತೀರೆಂದು ನಮಗೆ ತಿಳಿಯದು; ಅಂದಮೇಲೆ ಅಲ್ಲಿಗೆ ಹೋಗುವ ಮಾರ್ಗವು ಹೇಗೆ ತಿಳಿದೀತು?” ಎಂದು ಕೇಳಿದನು.</verse>
				<verse number="6">ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.</verse>
				<verse number="7">ನೀವು ನನ್ನನ್ನು ಅರಿತವರಾಗಿದ್ದರೆ ನನ್ನ ಪಿತನನ್ನು ಕೂಡ ಅರಿಯುತ್ತಿದ್ದಿರಿ. ಈಗಿನಿಂದ ಅವರನ್ನು ನೀವು ಅರಿತವರಾಗಿದ್ದೀರಿ ಹಾಗೂ ಕಂಡೂ ಇದ್ದೀರಿ,” ಎಂದು ನುಡಿದರು.</verse>
				<verse number="8">ಆಗ ಫಿಲಿಪ್ಪನು, “ಪ್ರಭೂ, ನಮಗೆ ಪಿತನನ್ನು ತೋರಿಸಿ; ಅಷ್ಟೇ ಸಾಕು,” ಎಂದನು.</verse>
				<verse number="9">ಅದಕ್ಕೆ ಉತ್ತರವಾಗಿ ಯೇಸು, “ನಾನು ಇಷ್ಟುಕಾಲ ನಿಮ್ಮೊಡನೆ ಇದ್ದರೂ ನಾನು ಯಾರೆಂಬುದನ್ನು ನೀನು ಅರಿತುಕೊಳ್ಳಲಿಲ್ಲವೆ? ನನ್ನನ್ನು ನೋಡಿದವನು ಪಿತನನ್ನೇ ನೋಡಿದವನಾಗಿದ್ದಾನೆ. ಹೀಗಿರುವಾಗ, ಫಿಲಿಪ್ಪನೇ, ‘ನಮಗೆ ಪಿತನನ್ನು ತೋರಿಸಿ’ ಎಂದು ಹೇಗೆ ಕೇಳುತ್ತೀ?</verse>
				<verse number="10">ನಾನು ಪಿತನಲ್ಲಿ ಇದ್ದೇನೆ, ಪಿತನು ನನ್ನಲ್ಲಿ ಇದ್ದಾರೆ. ಇದನ್ನು ನೀನು ವಿಶ್ವಾಸಿಸುವುದಿಲ್ಲವೇ? ನಾನು ನಿಮಗೆ ಹೇಳುವ ಮಾತುಗಳನ್ನು ನನ್ನಷ್ಟಕ್ಕೆ ನಾನೇ ಆಡುತ್ತಿಲ್ಲ. ಪಿತನೇ ನನ್ನಲ್ಲಿದ್ದುಕೊಂಡು ತಮ್ಮ ಕಾರ್ಯವನ್ನು ಸಾಧಿಸುತ್ತಾರೆ.</verse>
				<verse number="11">‘ನಾನು ಪಿತನಲ್ಲಿ ಇದ್ದೇನೆ. ಪಿತನು ನನ್ನಲ್ಲಿ ಇದ್ದಾರೆ,’ ಎನ್ನುವ ನನ್ನ ಮಾತುಗಳನ್ನು ವಿಶ್ವಾಸಿಸಿರಿ; ಇಲ್ಲವೇ, ನಾನು ಸಾಧಿಸಿದ ಸುಕೃತ್ಯಗಳ ನಿಮಿತ್ತದಿಂದಾದರೂ ವಿಶ್ವಾಸಿಸಿರಿ.</verse>
				<verse number="12">ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿವಿಶ್ವಾಸವುಳ್ಳವನು ನಾನು ಸಾಧಿಸುವ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೇ ಏಕೆ, ಅವುಗಳಿಗಿಂತಲೂ ಮಹತ್ತಾದುವುಗಳನ್ನು ಸಾಧಿಸುವನು. ಏಕೆಂದರೆ ನಾನು ಪಿತನ ಬಳಿಗೆ ಹೋಗುತ್ತೇನೆ.</verse>
				<verse number="13">ಇದಲ್ಲದೆ ನೀವು ನನ್ನ ಹೆಸರಿನಲ್ಲಿ ಕೇಳಿಕೊಳ್ಳುವುದನ್ನೆಲ್ಲಾ ಮಾಡುತ್ತೇನೆ. ಹೀಗೆ ಪಿತನಿಗೆ ಪುತ್ರನಲ್ಲಿ ಮಹಿಮೆ ಉಂಟಾಗುವುದು.</verse>
				<verse number="14">ಹೌದು, ನನ್ನ ಹೆಸರಿನಲ್ಲಿ ನೀವು ಏನನ್ನು ಕೇಳಿದರೂ ನಾನು ಅದನ್ನು ಮಾಡಿಯೇ ತೀರುವೆನು.</verse>
				<verse number="15">ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನನ್ನ ಆಜ್ಞೆಗಳನ್ನು ಕೈಗೊಂಡು ನಡೆಯುವಿರಿ.</verse>
				<verse number="16">ನಾನೂ ಪಿತನನ್ನು ಕೇಳಿಕೊಳ್ಳುವೆನು; ಅವರು ನಿಮಗೆ ಬೇರೊಬ್ಬ ಪೋಷಕರನ್ನು ಕೊಡುವರು. ಇವರು ನಿಮ್ಮೊಡನೆ ಯಾವಾಗಲೂ ಇರುವರು.</verse>
				<verse number="17">ಸತ್ಯಸ್ವರೂಪಿಯಾದ ಪವಿತ್ರಾತ್ಮನೇ ಈ ಪೋಷಕ. ಲೋಕವು ಇವರನ್ನು ಬರಮಾಡಿಕೊಳ್ಳದು. ಏಕೆಂದರೆ ಲೋಕ ಇವರನ್ನು ಕಾಣುವುದೂ ಇಲ್ಲ, ಅರಿತುಕೊಳ್ಳುವುದೂ ಇಲ್ಲ. ಆದರೆ ನೀವು ಇವರನ್ನು ಅರಿಯುವಿರಿ. ಕಾರಣ, ಇವರು ನಿಮ್ಮೊಂದಿಗೂ ನಿಮ್ಮಲ್ಲಿಯೂ ನೆಲಸಿರುವರು.</verse>
				<verse number="18">ನಾನು ನಿಮ್ಮನ್ನು ಅನಾಥರನ್ನಾಗಿ ಬಿಟ್ಟುಹೋಗುವುದಿಲ್ಲ. ನಿಮ್ಮ ಬಳಿಗೆ ಪುನಃ ಬರುತ್ತೇನೆ.</verse>
				<verse number="19">ಇನ್ನು ತುಸುಕಾಲವಾದ ನಂತರ ಲೋಕವು ನನ್ನನ್ನು ಕಾಣದು. ಆದರೆ ನೀವು ನನ್ನನ್ನು ಕಾಣುವಿರಿ. ನಾನು ಜೀವಿಸುವವನಾಗಿರುವುದರಿಂದ ನೀವೂ ಜೀವಿಸುವಿರಿ.</verse>
				<verse number="20">ನಾನು ನನ್ನ ಪಿತನಲ್ಲಿ ಇರುವೆನು; ನೀವು ನನ್ನಲ್ಲಿ ಇರುವಿರಿ ಮತ್ತು ನಾನು ನಿಮ್ಮಲ್ಲಿ ಇರುವೆನು. ಇದನ್ನು ಆ ದಿನದಂದು ನೀವು ಅರಿತುಕೊಳ್ಳುವಿರಿ.</verse>
				<verse number="21">ನನ್ನ ಆಜ್ಞೆಗಳನ್ನು ಅಂಗೀಕರಿಸಿ ಅವುಗಳ ಪ್ರಕಾರ ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ಪಿತನಿಗೂ ಪ್ರಿಯನಾಗಿರುವನು. ನಾನೂ ಅವನನ್ನು ಪ್ರೀತಿಸಿ ನನ್ನನ್ನೇ ಅವನಿಗೆ ಸಾಕ್ಷಾತ್ಕರಿಸಿಕೊಡುವೆನು.”</verse>
				<verse number="22">ಆಗ ಯೂದನು, (ಈತ ಇಸ್ಕರಿಯೋತಿನ ಯೂದನಲ್ಲ) “ಪ್ರಭೂ, ನೀವು ಈ ಲೋಕಕ್ಕೆ ನಿಮ್ಮನ್ನು ಸಾಕ್ಷಾತ್ಕರಿಸಿಕೊಳ್ಳದೆ ನಮಗೆ ಮಾತ್ರ ಸಾಕ್ಷಾತ್ಕರಿಸಿಕೊಳ್ಳುತ್ತೀರಲ್ಲಾ, ಏಕೆ?” ಎಂದು ಕೇಳಿದನು.</verse>
				<verse number="23">ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು.</verse>
				<verse number="24">ನನ್ನನ್ನು ಪ್ರೀತಿಸದೆ ಇರುವವನು ನನ್ನ ಮಾತನ್ನು ಕೈಗೊಂಡು ನಡೆಯುವುದಿಲ್ಲ. ನೀವು ಕೇಳುತ್ತಿರುವ ಮಾತು ನನ್ನದಲ್ಲ, ನನ್ನನ್ನು ಕಳುಹಿಸಿದ ಪಿತನದೇ.</verse>
				<verse number="25">ನಾನು ನಿಮ್ಮೊಡನೆ ಇರುವಾಗಲೇ ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.</verse>
				<verse number="26">ಆದರೆ ಪಿತನು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪೋಷಕರಾದ ಪವಿತ್ರಾತ್ಮ ನಿಮಗೆ ಎಲ್ಲವನ್ನೂ ಬೋಧಿಸಿ ನಾನು ಹೇಳಿರುವುದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.</verse>
				<verse number="27">ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.</verse>
				<verse number="28">ನಾನು ಹೊರಟುಹೋಗುತ್ತೇನೆಂದೂ ಮತ್ತೆ ನಿಮ್ಮ ಬಳಿಗೆ ಬರುತ್ತೇನೆಂದೂ ನಾನು ಹೇಳಿದ್ದನ್ನು ನೀವು ಕೇಳಿದ್ದೀರಿ. ನೀವು ನನ್ನನ್ನು ಪ್ರೀತಿಸುವವರಾಗಿದ್ದರೆ ನಾನು ಪಿತನ ಬಳಿಗೆ ಹೋಗುತ್ತಿರುವುದನ್ನು ಕುರಿತು ಹಿಗ್ಗುತ್ತಿದ್ದಿರಿ. ಏಕೆಂದರೆ ಪಿತ ನನಗಿಂತಲೂ ಶ್ರೇಷ್ಠರು.</verse>
				<verse number="29">ಇದೆಲ್ಲಾ ಈಡೇರುವಾಗ ನೀವು ವಿಶ್ವಾಸಿಸುವಂತೆ ಅದು ಈಡೇರುವುದಕ್ಕೆ ಮುಂಚೆಯೇ ನಿಮಗೆ ತಿಳಿಯಪಡಿಸಿದ್ದೇನೆ.</verse>
				<verse number="30">ಇಹದ ಲೋಕಾಧಿಪತಿ ಬರುವ ಸಮಯವಾಯಿತು. ಇನ್ನು ಬಹಳ ಹೊತ್ತು ನಾನು ನಿಮ್ಮೊಡನೆ ಮಾತನಾಡಲು ಕಾಲಾವಕಾಶವಿಲ್ಲ. ನನ್ನ ಮೇಲೆ ಅವನಿಗೆ ಯಾವ ಅಧಿಕಾರವೂ ಇಲ್ಲ.</verse>
				<verse number="31">ಆದರೆ ನಾನು ಪಿತನನ್ನು ಪ್ರೀತಿಸುತ್ತೇನೆಂಬುದನ್ನೂ ಅವರು ವಿಧಿಸಿದಂತೆಯೇ ಮಾಡುತ್ತೇನೆ ಎಂಬುದನ್ನೂ ಲೋಕವು ತಿಳಿಯಬೇಕು. ಏಳಿ, ಇಲ್ಲಿಂದ ಹೋಗೋಣ,” ಎಂದರು.</verse>
			</chapter>
			<chapter number="15">
				<verse number="1">“ನಾನೇ ನಿಜವಾದ ದ್ರಾಕ್ಷಾಬಳ್ಳಿ. ನನ್ನ ಪಿತನೇ ತೋಟಗಾರ.</verse>
				<verse number="2">ನನ್ನಲ್ಲಿದ್ದೂ ಫಲಕೊಡದ ಕವಲುಬಳ್ಳಿಗಳನ್ನೆಲ್ಲಾ ಅವರು ಕತ್ತರಿಸಿಹಾಕುವರು. ಫಲಕೊಡುವ ಕವಲುಬಳ್ಳಿಗಳು ಮತ್ತಷ್ಟು ಫಲಕೊಡುವಂತೆ ಅವನ್ನು ಸವರಿ ಶುದ್ಧಗೊಳಿಸುವರು.</verse>
				<verse number="3">ನೀವಾದರೋ, ನಾನು ನಿಮ್ಮೊಡನೆ ಆಡಿದ ಮಾತಿನಿಂದಾಗಿ ಸವರಿದ ಕವಲುಗಳಂತೆ ಶುದ್ಧರಾಗಿದ್ದೀರಿ.</verse>
				<verse number="4">ನೀವು ನನ್ನಲ್ಲಿ ನೆಲೆಗೊಂಡಿರಿ, ಆಗ ನಾನು ನಿಮ್ಮಲ್ಲಿ ನೆಲೆಗೊಂಡಿರುವೆನು. ಕವಲು ಮೂಲಬಳ್ಳಿಯಲ್ಲಿ ಒಂದಾಗಿ ನೆಲಸದಿದ್ದರೆ ತನ್ನಷ್ಟಕ್ಕೆ ತಾನೇ ಫಲಕೊಡಲಾಗದು. ಹಾಗೆಯೇ ನೀವು ಕೂಡ ನನ್ನಲ್ಲಿ ಒಂದಾಗಿ ನೆಲಸದಿದ್ದರೆ ಫಲಕೊಡಲಾರಿರಿ.</verse>
				<verse number="5">“ಹೌದು, ನಾನೇ ದ್ರಾಕ್ಷಾಬಳ್ಳಿ; ನೀವೇ ಅದರ ಕವಲುಬಳ್ಳಿಗಳು. ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅಂಥವನು ಸಮೃದ್ಧಿಯಾಗಿ ಫಲಕೊಡುವನು. ಏಕೆಂದರೆ, ನನ್ನಿಂದ ಬೇರ್ಪಟ್ಟು ನಿಮ್ಮಿಂದ ಏನೂ ಮಾಡಲಾಗದು.</verse>
				<verse number="6">ನನ್ನಲ್ಲಿ ನೆಲಸದವನನ್ನು ಕವಲುಬಳ್ಳಿಯಂತೆ ಕತ್ತರಿಸಿ ಎಸೆಯಲಾಗುವುದು; ಅವನು ಒಣಗಿಹೋಗುವನು. ಒಣಗಿದ ಕವಲುಗಳನ್ನು ಒಟ್ಟುಗೂಡಿಸಿ ಬೆಂಕಿಯಲ್ಲಿ ಸುಟ್ಟುಹಾಕಲಾಗುವುದು.</verse>
				<verse number="7">“ನೀವು ನನ್ನಲ್ಲಿಯೂ ನನ್ನ ವಾಕ್ಯವು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನು ಬೇಕಾದರೂ ಕೇಳಬಹುದು. ನಿಮಗದು ಸಿಗುವುದು.</verse>
				<verse number="8">ನೀವು ಸಮೃದ್ಧಿಯಾಗಿ ಫಲಕೊಟ್ಟು ನನ್ನ ಶಿಷ್ಯರಾಗಿ ಬೆಳಗುವುದರಿಂದಲೇ ನನ್ನ ಪಿತನ ಮಹಿಮೆ ಪ್ರಕಟವಾಗುವುದು.</verse>
				<verse number="9">ಪಿತನು ನನ್ನನ್ನು ಪ್ರೀತಿಸಿದಂತೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ. ನನ್ನ ಪ್ರೀತಿಯಲ್ಲಿ ನೆಲೆಗೊಂಡು ನಿಲ್ಲಿರಿ.</verse>
				<verse number="10">ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.</verse>
				<verse number="11">“ನನ್ನಲ್ಲಿರುವ ಆನಂದವು ನಿಮ್ಮಲ್ಲಿ ಇರಬೇಕೆಂತಲೂ ನಿಮ್ಮ ಆನಂದವು ತುಂಬಿ ತುಳುಕಬೇಕೆಂತಲೂ ಇದನ್ನೆಲ್ಲಾ ನಿಮಗೆ ಹೇಳುತ್ತಿದ್ದೇನೆ.</verse>
				<verse number="12">ನಾನು ಕೊಡುವ ಆಜ್ಞೆ ಏನೆಂದರೆ: ನಾನು ನಿಮ್ಮನ್ನು ಪ್ರೀತಿಸಿದಂತೆಯೇ ನೀವು ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು.</verse>
				<verse number="13">ಗೆಳೆಯರಿಗಾಗಿ ತನ್ನ ಪ್ರಾಣವನ್ನೇ ಧಾರೆಯೆರೆಯುವ ಪ್ರೀತಿಗಿಂತ ಮಿಗಿಲಾದ ಪ್ರೀತಿ ಯಾರಲ್ಲೂ ಇಲ್ಲ.</verse>
				<verse number="14">ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.</verse>
				<verse number="15">ನಾನಿನ್ನು ನಿಮ್ಮನ್ನು ದಾಸರೆಂದು ಕರೆಯುವುದಿಲ್ಲ. ಧಣಿಯ ಕೆಲಸಕಾರ್ಯಗಳು ದಾಸನಿಗೆ ತಿಳಿಯವು. ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ.</verse>
				<verse number="16">ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ, ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಲೋಕಕ್ಕೆ ಹೋಗಬೇಕು, ಸಫಲರಾಗಬೇಕು; ಆ ಫಲ ಶಾಶ್ವತವಾಗಿರಬೇಕೆಂದೇ ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ಪಿತನಿಂದ ಏನು ಕೇಳಿದರೂ ನಿಮಗೆ ಅದು ಸಿಗುವುದು.</verse>
				<verse number="17">ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನಾನು ನಿಮಗೆ ಕೊಡುವ ಆಜ್ಞೆ.</verse>
				<verse number="18">“ಲೋಕವು ನಿಮ್ಮನ್ನು ದ್ವೇಷಿಸಿದರೆ, ನನ್ನ ಮೇಲೆ ಅದಕ್ಕೆ ಮೊದಲೇ ದ್ವೇಷವಿತ್ತೆಂಬುದನ್ನು ನೆನಪಿನಲ್ಲಿಡಿ.</verse>
				<verse number="19">ನೀವು ಲೋಕದ ಕಡೆಯವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಮಮತೆಯಿಂದ ಕಾಣುತ್ತಿತ್ತು. ನೀವಾದರೋ ಲೋಕದ ಕಡೆಗೆ ಸೇರಿದವರಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿರುವುದರಿಂದ ನೀವು ಲೋಕದಿಂದ ಬೇರ್ಪಟ್ಟಿದ್ದೀರಿ ಎಂದೇ ಲೋಕಕ್ಕೆ ನಿಮ್ಮ ಮೇಲೆ ದ್ವೇಷವಿದೆ.</verse>
				<verse number="20">ಧಣಿಗಿಂತಲೂ ದಾಸನು ದೊಡ್ಡವನಲ್ಲವೆಂದು ನಾನು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿ. ಅವರು ನನ್ನನ್ನು ಹಿಂಸೆಗೆ ಗುರಿಮಾಡಿದಂತೆ ನಿಮ್ಮನ್ನೂ ಹಿಂಸೆಗೆ ಗುರಿಮಾಡುವರು. ನನ್ನ ಬೋಧನೆಯ ಮಾತನ್ನು ಅವರು ಅನುಸರಿಸಿ ನಡೆದರೆ ನಿಮ್ಮ ಬೋಧನೆಯ ಮಾತನ್ನು ಅನುಸರಿಸಿ ನಡೆಯುವರು.</verse>
				<verse number="21">ನೀವು ನನ್ನವರಾದುದರಿಂದ ಅವರು ನಿಮ್ಮನ್ನು ಹೀಗೆ ಕಾಣುವರು. ಏಕೆಂದರೆ ನನ್ನನ್ನು ಕಳುಹಿಸಿದಾತನನ್ನು ಅವರು ಅರಿಯರು.</verse>
				<verse number="22">ನಾನು ಬಂದು ಅವರಿಗೆ ಬೋಧನೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳು ಎಂದು ಹೇಳಲಾಗುತ್ತಿರಲಿಲ್ಲ. ಆದರೆ ಈಗ ಅವರ ದೋಷಕ್ಕೆ ಯಾವ ನೆಪವನ್ನೂ ಒಡ್ಡುವಂತಿಲ್ಲ.</verse>
				<verse number="23">ನನ್ನ ಮೇಲೆ ದ್ವೇಷ ಇದ್ದವನಿಗೆ ನನ್ನ ಪಿತನ ಮೇಲೆಯೂ ದ್ವೇಷ ಇದೆ.</verse>
				<verse number="24">ಬೇರೆ ಯಾರೂ ಮಾಡದ ಮಹತ್ತಾದ ಕಾರ್ಯಗಳನ್ನು ನಾನು ಅವರ ನಡುವೆ ಮಾಡದೆಹೋಗಿದ್ದರೆ ಅವರು ಪಾಪದೋಷಿಗಳೆಂದು ಹೇಳಲಾಗುತ್ತಿರಲಿಲ್ಲ. ಆದರೆ ಅವರು ನನ್ನ ಕಾರ್ಯಗಳನ್ನು ನೋಡಿಯು ಸಹ ನನ್ನ ಮೇಲೆ ಹಾಗು ನನ್ನ ಪಿತನ ಮೇಲೆ ದ್ವೇಷ ಬೆಳೆಸಿದ್ದಾರೆ.</verse>
				<verse number="25">“ನಿಷ್ಕಾರಣವಾಗಿ ಅವರು ನನ್ನನ್ನು ದ್ವೇಷಿಸಿದರು” ಎಂದು ಅವರ ಧರ್ಮಶಾಸ್ತ್ರದಲ್ಲೇ ಬರೆದಿರುವುದು ಹೀಗೆ ನೆರವೇರಿದೆ.</verse>
				<verse number="26">ಪಿತನಿಂದ ಹೊರಡುವ ಸತ್ಯಸ್ವರೂಪಿಯಾದ ಪವಿತ್ರಾತ್ಮರನ್ನು ನಿಮ್ಮ ಪೋಷಕರನ್ನಾಗಿ ನಾನು ಪಿತನಿಂದಲೇ ಕಳುಹಿಸುವೆನು. ಅವರು ಬಂದು ನನ್ನ ಪರವಾಗಿ ಸಾಕ್ಷಿನೀಡುವರು.</verse>
				<verse number="27">ಮೊತ್ತಮೊದಲಿನಿಂದಲೂ ನನ್ನ ಸಂಗಡ ಇದ್ದ ನೀವು ಕೂಡ ನನ್ನನ್ನು ಕುರಿತು ಸಾಕ್ಷಿನೀಡುವವರಾಗಿದ್ದೀರಿ.</verse>
			</chapter>
			<chapter number="16">
				<verse number="1">“ನಿಮ್ಮ ವಿಶ್ವಾಸ ಕುಸಿಯದಂತೆ ನೀವು ಎಚ್ಚರಿಕೆ ವಹಿಸಬೇಕೆಂದು ನಾನು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.</verse>
				<verse number="2">ಜನರು, ನಿಮ್ಮನ್ನು ಪ್ರಾರ್ಥನಾಮಂದಿರದಿಂದ ಬಹಿಷ್ಕರಿಸುವರು, ಅಷ್ಟೇ ಅಲ್ಲ, ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವೂ ಬರಲಿದೆ.</verse>
				<verse number="3">ನನ್ನನ್ನಾಗಲಿ, ಪಿತನನ್ನಾಗಲಿ ಅವರು ಅರಿತಿಲ್ಲದ ಕಾರಣ ನಿಮಗೆ ಹೀಗೆ ಮಾಡುವರು.</verse>
				<verse number="4">ಅಂಥಕಾಲ ಬಂದಾಗ ಇದನ್ನೆಲ್ಲಾ ಕುರಿತು ನಾನು ನಿಮ್ಮನ್ನು ಮೊದಲೇ ಎಚ್ಚರಿಸಿದ್ದೇನೆಂದು ನೀವು ನೆನಸಿಕೊಳ್ಳುವಂತೆ ಇದನ್ನು ಹೇಳುತ್ತಿದ್ದೇನೆ.</verse>
				<verse number="5">“ನಾನು ನಿಮ್ಮ ಸಂಗಡ ಇದ್ದುದರಿಂದ ಇದನ್ನೆಲ್ಲಾ ಮೊದಲೇ ನಿಮಗೆ ತಿಳಿಸಲಿಲ್ಲ. ಈಗಲಾದರೋ ನನ್ನನ್ನು ಕಳುಹಿಸಿದಾತನಲ್ಲಿಗೆ ನಾನು ತೆರಳುತ್ತೇನೆ. ನಾನು ಹೋಗುವುದು ಎಲ್ಲಿಗೆ ಎಂದು ನೀವು ಯಾರೂ ಕೇಳುತ್ತಿಲ್ಲವಾದರೂ</verse>
				<verse number="6">ಇದನ್ನೆಲ್ಲಾ ನಾನು ನಿಮಗೆ ಹೇಳಿದ್ದರಿಂದ ನಿಮ್ಮ ಹೃದಯವು ದುಃಖಭರಿತವಾಗಿದೆ.</verse>
				<verse number="7">ವಾಸ್ತವವಾಗಿ ಹೇಳುವುದಾದರೆ, ನಾನು ಹೋಗುವುದು ನಿಮ್ಮ ಹಿತಕ್ಕಾಗಿಯೇ. ನಾನು ಹೋಗದಿದ್ದರೆ, ಪೋಷಕ ನಿಮ್ಮಲ್ಲಿಗೆ ಬರುವುದಿಲ್ಲ. ನಾನು ಹೋದರೆ ಮಾತ್ರ ಅವರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡಬಲ್ಲೆ.</verse>
				<verse number="8">ಆ ಪೋಷಕ ಬಂದು ಪಾಪ, ನ್ಯಾಯನೀತಿ, ಮತ್ತು ಅಂತಿಮತೀರ್ಪು ಇವುಗಳನ್ನು ಕುರಿತು ಲೋಕದ ಜನತೆ ತಾಳಿದ್ದ ತಪ್ಪುಭಾವನೆಗಳನ್ನು ಮನವರಿಕೆ ಮಾಡಿಕೊಡುವರು.</verse>
				<verse number="9">ಪಾಪದ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ಅವರು ನನ್ನಲ್ಲಿ ವಿಶ್ವಾಸ ಇಡಲಿಲ್ಲ.</verse>
				<verse number="10">ನ್ಯಾಯನೀತಿಯ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ನಾನು ಪಿತನ ಬಳಿಗೆಹೋಗುತ್ತೇನೆ ಮತ್ತು ನೀವು ನನ್ನನ್ನು ಕಾಣಲಾರಿರಿ.</verse>
				<verse number="11">ಅಂತಿಮ ತೀರ್ಪಿನ ವಿಷಯವಾಗಿ ಅವರ ತಪ್ಪುಭಾವನೆಯನ್ನು ಮನವರಿಕೆ ಮಾಡಿಕೊಡುವರು. ಏಕೆಂದರೆ, ಇಹದ ಲೋಕಾಧಿಪತಿಗೆ ಈಗಾಗಲೇ ನ್ಯಾಯತೀರ್ಪನ್ನು ಕೊಡಲಾಗಿದೆ.</verse>
				<verse number="12">ನಾನು ನಿಮಗೆ ಹೇಳಬೇಕಾದುದು ಇನ್ನೂ ಎಷ್ಟೋ ಇದೆ. ಸಧ್ಯಕ್ಕೆ ಅವು ನಿಮಗೆ ಹೊರಲಾಗದ ಹೊರೆಯಾಗಬಾರದು.</verse>
				<verse number="13">ಹೇಗೂ ಸತ್ಯಸ್ವರೂಪಿ ಆದ ಪವಿತ್ರಾತ್ಮ ಬಂದಮೇಲೆ ನಿಮ್ಮನ್ನು ಸಮಗ್ರ ಸತ್ಯದೆಡೆಗೆ ಕರೆದೊಯ್ಯುವರು. ಅವರು ತಮ್ಮಷ್ಟಕ್ಕೆ ತಾವೇ ಏನನ್ನೂ ಬೋಧಿಸದೆ ತಾವು ಕೇಳಿದುದನ್ನು ಕುರಿತೇ ಮಾತನಾಡುವರು; ಮುಂದೆ ನಡೆಯಲಿರುವುದನ್ನೂ ನಿಮಗೆ ತಿಳಿಸುವರು.</verse>
				<verse number="14">ಅವರು, ನಾನು ಹೇಳಿದವುಗಳಿಂದಲೇ ಆಯ್ದು ನಿಮಗೆ ತಿಳಿಯಪಡಿಸಿ ನನ್ನ ಮಹಿಮೆಯನ್ನು ಬೆಳಗಿಸುವರು.</verse>
				<verse number="15">ಪಿತನಿಗೆ ಇರುವುದೆಲ್ಲವೂ ನನ್ನದೇ. ಆದುದರಿಂದಲೇ ಪವಿತ್ರಾತ್ಮ ನಾನು ಹೇಳಿದವುಗಳಿಂದಲೇ ಆಯ್ದು ನಿಮಗೆ ತಿಳಿಯಪಡಿಸುವರೆಂದು ನಾನು ಹೇಳಿದ್ದು.</verse>
				<verse number="16">“ತುಸುಕಾಲವಾದ ನಂತರ ನೀವು ನನ್ನನ್ನು ಕಾಣಲಾರಿರಿ. ಅನಂತರ ತುಸುಕಾಲ ಕಳೆಯುತ್ತಲೇ ನನ್ನನ್ನು ಪುನಃ ಕಾಣುವಿರಿ,” ಎಂದರು ಯೇಸು ಸ್ವಾಮಿ.</verse>
				<verse number="17">ಇದನ್ನು ಕೇಳಿದ ಕೆಲವು ಮಂದಿ ಶಿಷ್ಯರು, “ಇದೇನು ಇವರು ಹೇಳುತ್ತಿರುವುದು? ‘ತುಸು ಕಾಲವಾದ ನಂತರ ನೀವು ನನ್ನನ್ನು ಕಾಣಲಾರಿರಿ. ಅನಂತರ ತುಸುಕಾಲ ಕಳೆಯುತ್ತಲೇ ನೀವು ನನ್ನನ್ನು ಪುನಃ ಕಾಣುವಿರಿ ಮತ್ತು ಪಿತನಲ್ಲಿಗೆ ನಾನು ಹೋಗುತ್ತೇನೆ,’ ಎನ್ನುತ್ತಾರಲ್ಲ?</verse>
				<verse number="18">‘ತುಸುಕಾಲ’ ಎಂದರೇನು? ಇವರ ಮಾತೇ ನಮಗೆ ಅರ್ಥವಾಗುತ್ತಿಲ್ಲವಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡತೊಡಗಿದರು.</verse>
				<verse number="19">ಯೇಸು, ತಮ್ಮಲ್ಲಿ ಅವರು ವಿಚಾರಿಸಬೇಕೆಂದಿದ್ದಾರೆಂದು ತಿಳಿದುಕೊಂಡು, ‘ತುಸುಕಾಲದ ನಂತರ ನೀವು ನನ್ನನ್ನು ಕಾಣಲಾರಿರಿ. ಅನಂತರ ತುಸುಕಾಲ ಕಳೆಯುತ್ತಲೇ ನನ್ನನ್ನು ಪುನಃ ಕಾಣುವಿರಿ’ ಎಂದು ನಾನು ಹೇಳಿದ್ದನ್ನು ಕುರಿತು ನಿಮ್ಮನಿಮ್ಮಲ್ಲಿಯೇ ನೀವು ಚರ್ಚಿಸುತ್ತಿರುವುದೇನು?</verse>
				<verse number="20">ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ; ನೀವು ಅತ್ತುಗೋಳಾಡುವಿರಿ; ಲೋಕವಾದರೋ ನಕ್ಕು ನಲಿದಾಡುವುದು. ನೀವು ದುಃಖಪಡುವಿರಿ. ಆದರೆ ನಿಮ್ಮ ದುಃಖ ಆನಂದವಾಗಿ ಮಾರ್ಪಡುವುದು.</verse>
				<verse number="21">ಗರ್ಭಿಣಿಯಾದ ಸ್ತ್ರೀಯು ಪ್ರಸವಿಸುವ ಗಳಿಗೆ ಬಂದಾಗ ವೇದನೆಪಡುತ್ತಾಳೆ; ಮಗುವನ್ನು ಹೆರುತ್ತಲೇ ಜಗದಲ್ಲಿ ಮಾನವನೊಬ್ಬನು ಜನಿಸಿದನೆಂಬ ಉಲ್ಲಾಸದಿಂದ ತಾನು ಪಟ್ಟ ವೇದನೆಯನ್ನು ಮರೆತುಬಿಡುತ್ತಾಳೆ;</verse>
				<verse number="22">ನಿಮಗೆ ಈಗ ದುಃಖವಿದೆ; ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ.</verse>
				<verse number="23">ಆ ದಿನದಂದು ನನ್ನಿಂದ ನೀವೇನನ್ನೂ ಕೇಳುವಂತಿಲ್ಲ. ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನೀವು ಪಿತನಲ್ಲಿ ಏನನ್ನು ಬೇಡಿಕೊಂಡರೂ ನಿಮಗೆ ಅವರು ನನ್ನ ಹೆಸರಿನಲ್ಲಿ ಕೊಟ್ಟೇತೀರುವರು.</verse>
				<verse number="24">ಈ ತನಕ ನನ್ನ ಹೆಸರಿನಲ್ಲಿ ನೀವೇನನ್ನೂ ಕೇಳಲಿಲ್ಲ. ಕೇಳಿ, ನಿಮಗೆ ದೊರೆಯುವುದು. ಆಗ ನಿಮ್ಮ ಆನಂದವು ತುಂಬಿ ತುಳುಕುವುದು.</verse>
				<verse number="25">“ಈ ಸಂಗತಿಗಳನ್ನೆಲ್ಲಾ ನಿಮಗೆ ಸಾಮತಿಗಳ ರೂಪದಲ್ಲಿ ತಿಳಿಸಿರುವೆನು. ಕಾಲವು ಬರಲಿದೆ. ಆಗ ಸಾಮತಿಗಳನ್ನು ಬಳಸದೆ ಸ್ಪಷ್ಟವಾದ ಮಾತಿನಲ್ಲಿ ಪಿತನನ್ನು ಕುರಿತು ನಿಮಗೆ ತಿಳಿಸುವೆನು.</verse>
				<verse number="26">ಆ ಕಾಲವು ಬಂದಾಗ ನನ್ನ ಹೆಸರು ಹೇಳಿ ನೀವೇ ಪಿತನಲ್ಲಿ ಬೇಡುವಿರಿ. ನಿಮ್ಮ ಪರವಾಗಿ ನಾನು ಪಿತನಲ್ಲಿ ಬೇಡಿಕೊಳ್ಳುವೆನೆಂದು ನಾನು ಹೇಳುವುದಿಲ್ಲ.</verse>
				<verse number="27">ಕಾರಣ, ಪಿತನೇ ನಿಮ್ಮನ್ನು ಪ್ರೀತಿಸುತ್ತಾರೆ. ನೀವು ನನ್ನನ್ನು ಪ್ರೀತಿಸಿ ನಾನು ಅವರಿಂದ ಬಂದವನೆಂದು ವಿಶ್ವಾಸಿಸಿದ್ದರಿಂದ ಪಿತನಿಗೆ ನಿಮ್ಮ ಮೇಲೆ ಅಕ್ಕರೆಯಿದೆ.</verse>
				<verse number="28">ಹೌದು, ನಾನು ಪಿತನಿಂದಲೇ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ಈಗ ಈ ಲೋಕವನ್ನು ಬಿಟ್ಟು ಪಿತನಲ್ಲಿಗೆ ಹೋಗುತ್ತಿದ್ದೇನೆ,” ಎಂದರು.</verse>
				<verse number="29">ಅದಕ್ಕೆ ಶಿಷ್ಯರು, “ಈಗ ನೀವು ಸಾಮತಿಗಳನ್ನು ಬಳಸದೆ ಸ್ಪಷ್ಟವಾಗಿಯೇ ಮಾತನಾಡುತ್ತಿದ್ದೀರಿ.</verse>
				<verse number="30">ನೀವು ಎಲ್ಲವನ್ನೂ ಬಲ್ಲವರು. ಪ್ರಶ್ನೆಗಳಿಗಾಗಿ ನೀವು ಕಾಯಬೇಕಿಲ್ಲ ಎಂದು ನಮಗೀಗ ತಿಳಿಯಿತು. ಆದುದರಿಂದ ನೀವು ದೇವರಿಂದ ಬಂದವರೆಂದು ನಾವು ವಿಶ್ವಾಸಿಸುತ್ತೇವೆ,” ಎಂದರು.</verse>
				<verse number="31">ಆಗ ಯೇಸು ಸ್ವಾಮಿ, “ಈಗ ನೀವು ವಿಶ್ವಾಸಿಸುತ್ತೀರೋ?</verse>
				<verse number="32">ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮನಿಮ್ಮ ಮನೆಗೆ ಚದರಿಹೋಗುವ ಕಾಲವು ಬರುತ್ತದೆ. ಈಗಾಗಲೇ ಬಂದಿದೆ. ಆದರೆ ಪಿತನು ನನ್ನೊಡನೆ ಇರುವುದರಿಂದ ನಾನು ಒಬ್ಬಂಟಿಗನಲ್ಲ.</verse>
				<verse number="33">ನಿಮಗೆ ನನ್ನಲ್ಲಿ ಶಾಂತಿಸಮಾಧಾನ ಲಭಿಸಲೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಕಷ್ಟಸಂಕಟಗಳು ತಪ್ಪಿದ್ದಲ್ಲ, ಆದರೆ ಧೈರ್ಯವಾಗಿರಿ. ನಾನು ಲೋಕವನ್ನು ಜಯಿಸಿದ್ದೇನೆ,” ಎಂದು ಹೇಳಿದರು.</verse>
			</chapter>
			<chapter number="17">
				<verse number="1">ಯೇಸು ಸ್ವಾಮಿ ಅವರೊಡನೆ ಹೀಗೆ ಮಾತನಾಡಿದ ಮೇಲೆ ಆಕಾಶದತ್ತ ಕಣ್ಣೆತ್ತಿ ನೋಡಿ, “ಪಿತನೇ, ನಿರೀಕ್ಷಿಸಿದ ಗಳಿಗೆ ಬಂದಿದೆ. ನಿಮ್ಮ ಪುತ್ರನು ನಿಮ್ಮ ಮಹಿಮೆಯನ್ನು ಬೆಳಗಿಸುವಂತೆ ನೀವು ಆತನ ಮಹಿಮೆಯನ್ನು ಬೆಳಗಿಸಿರಿ.</verse>
				<verse number="2">ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯಜೀವವನ್ನು ಆತನು ನೀಡುವನು.</verse>
				<verse number="3">ಏಕೈಕ ನಿಜದೇವರಾದ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅರಿತುಕೊಳ್ಳುವುದೇ ನಿತ್ಯಜೀವ.</verse>
				<verse number="4">ನೀವು ನನಗೆ ಕೊಟ್ಟ ಕಾರ್ಯವನ್ನು ನಾನು ಮಾಡಿ ಮುಗಿಸಿ ನಿಮ್ಮ ಮಹಿಮೆಯನ್ನು ಜಗತ್ತಿಗೆಲ್ಲ ತೋರ್ಪಡಿಸಿದೆನು.</verse>
				<verse number="5">ಪಿತನೇ, ಜಗತ್ತು ಉಂಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಮಹಿಮೆಯನ್ನು ಕೊಟ್ಟು ನನ್ನನ್ನು ಈಗ ನಿಮ್ಮ ಸನ್ನಿಧಿಯಲ್ಲಿ ಮಹಿಮೆಪಡಿಸಿರಿ.</verse>
				<verse number="6">“ನೀವು ಲೋಕದಿಂದ ಆರಿಸಿ ನನಗೆ ಕೊಟ್ಟ ಜನರಿಗೆ ನಿಮ್ಮ ನಾಮವನ್ನು ತಿಳಿಯಪಡಿಸಿದ್ದೇನೆ. ಇವರು ನಿಮ್ಮವರಾಗಿದ್ದರು. ಆದರೂ ಇವರನ್ನು ನನಗೆ ಕೊಟ್ಟಿರಿ. ನಿಮ್ಮ ಮಾತಿಗೆ ವಿಧೇಯರಾಗಿ ಇವರು ನಡೆದಿದ್ದಾರೆ.</verse>
				<verse number="7">ನೀವು ನನಗೆ ಕೊಟ್ಟಿದೆಲ್ಲವೂ ನಿಜವಾಗಿ ನಿಮ್ಮಿಂದಲೇ ಬಂದಿರುವುದೆಂದು ಈಗ ಇವರಿಗೆ ತಿಳಿದಿದೆ.</verse>
				<verse number="8">ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ.</verse>
				<verse number="9">“ನಾನು ಪ್ರಾರ್ಥಿಸುವುದು ಇವರಿಗಾಗಿ, ಲೋಕಕ್ಕಾಗಿ ಅಲ್ಲ. ನೀವೇ ನನಗೆ ಕೊಟ್ಟವರಿಗಾಗಿ ಪ್ರಾರ್ಥಿಸುತ್ತೇನೆ.</verse>
				<verse number="10">ಏಕೆಂದರೆ, ಇವರು ನಿಮ್ಮವರು; ಇವರಿಂದ ನನಗೆ ಮಹಿಮೆ ಉಂಟಾಗಿದೆ. ನನ್ನದೆಲ್ಲವೂ ನಿಮ್ಮದೇ; ನಿಮ್ಮದು ಎಲ್ಲವೂ ನನ್ನದೇ.</verse>
				<verse number="11">ನಾನಿನ್ನು ಲೋಕದಲ್ಲಿ ಇರುವುದಿಲ್ಲ. ಇವರಾದರೋ ಲೋಕದಲ್ಲಿ ಇರುತ್ತಾರೆ. ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ಪವಿತ್ರ ಪಿತನೇ, ನಾವು ಒಂದಾಗಿರುವಂತೆ ನೀವು ನನಗೆ ಕೊಟ್ಟಿರುವ ಇವರೂ ಒಂದಾಗಿರುವ ಹಾಗೆ ನಿಮ್ಮ ನಾಮದ ಶಕ್ತಿಯಿಂದ ಇವರನ್ನು ಸುರಕ್ಷಿತವಾಗಿರಿಸಿರಿ.</verse>
				<verse number="12">ನಾನು ಇವರೊಡನೆ ಇದ್ದಾಗ ಇವರನ್ನು ಕಾಪಾಡಿದೆನು. ನೀವಿತ್ತ ಇವರನ್ನು ನಿಮ್ಮ ನಾಮದ ಶಕ್ತಿಯಿಂದ ಸುರಕ್ಷಿತವಾಗಿ ನೋಡಿಕೊಂಡು ಬಂದೆನು. ಪವಿತ್ರಗ್ರಂಥದ ಮಾತು ನೆರವೇರುವಂತೆ ವಿನಾಶಕ್ಕೆ ಗುರಿಯಾಗಬೇಕಿದ್ದ ಒಬ್ಬನನ್ನು ಬಿಟ್ಟರೆ, ಇವರಲ್ಲಿ ಬೇರೆ ಯಾರೂ ನಾಶವಾಗಲಿಲ್ಲ.</verse>
				<verse number="13">ಈಗ ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ನನ್ನ ಆನಂದವು ಅವರ ಹೃದಯದಲ್ಲಿ ತುಂಬಿತುಳುಕುವಂತೆ ಈ ಲೋಕದಲ್ಲಿರುವಾಗಲೇ ಇವುಗಳನ್ನು ಹೇಳುತ್ತಿದ್ದೇನೆ.</verse>
				<verse number="14">ನಿಮ್ಮ ಸಂದೇಶವನ್ನು ಇವರಿಗೆ ತಿಳಿಸಿದ್ದೇನೆ. ನಾನು ಲೋಕಕ್ಕೆ ಸೇರಿದವನಲ್ಲ. ಅಂತೆಯೇ, ಇವರೂ ಲೋಕಕ್ಕೆ ಸೇರಿದವರಲ್ಲ. ಈ ಕಾರಣ, ಲೋಕಕ್ಕೆ ಇವರ ಮೇಲೆ ದ್ವೇಷವಿದೆ.</verse>
				<verse number="15">ಇವರನ್ನು ಲೋಕದಿಂದ ತೆಗೆದುಬಿಡಬೇಕೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತಿಲ್ಲ. ಆದರೆ ಕೇಡಿಗನಿಂದ ಇವರನ್ನು ಕಾಪಾಡಬೇಕೆಂದು ಕೇಳಿಕೊಳ್ಳುತ್ತೇನೆ.</verse>
				<verse number="16">ನಾನು ಲೋಕಕ್ಕೆ ಹೇಗೆ ಸೇರಿದವನಲ್ಲವೋ ಹಾಗೆಯೇ ಇವರೂ ಲೋಕಕ್ಕೆ ಸೇರಿದವರಲ್ಲ.</verse>
				<verse number="17">ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ. ನಿಮ್ಮ ಮಾತೇ ಸತ್ಯ.</verse>
				<verse number="18">ನೀವು ನನ್ನನ್ನು ಲೋಕಕ್ಕೆ ಕಳಿಸಿದಂತೆ ನಾನು ಇವರನ್ನು ಲೋಕಕ್ಕೆ ಕಳಿಸಿದ್ದೇನೆ.</verse>
				<verse number="19">ಸತ್ಯಸಂಧರಾಗಿ ಇವರು ನಿಮ್ಮ ಸೇವೆಗೆ ಮೀಸಲಾಗಬೇಕೆಂದು ನನ್ನನ್ನು ನಾನೇ ಮೀಸಲಾಗಿಸಿಕೊಂಡಿದ್ದೇನೆ.</verse>
				<verse number="20">“ಇವರಿಗಾಗಿ ಮಾತ್ರವಲ್ಲ, ಇವರ ಮಾತನ್ನು ಕೇಳಿ ನನ್ನಲ್ಲಿ ವಿಶ್ವಾಸವಿಡುವವರಿಗಾಗಿಯೂ ಪ್ರಾರ್ಥಿಸುತ್ತೇನೆ.</verse>
				<verse number="21">ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ.</verse>
				<verse number="22">ನಾವು ಒಂದಾಗಿರುವಂತೆ ಇವರೂ ಒಂದಾಗಿರಲೆಂದು ನೀವು ನನಗಿತ್ತ ಮಹಿಮೆಯನ್ನು ನಾನು ಇವರಿಗೆ ಕೊಟ್ಟಿದ್ದೇನೆ.</verse>
				<verse number="23">ನಾನು ಇವರಲ್ಲಿಯೂ ನೀವು ನನ್ನಲ್ಲಿಯೂ ಇದ್ದು, ಇವರ ಐಕ್ಯಮತ್ಯವು ಪೂರ್ಣಸಿದ್ಧಿಗೆ ಬರಲಿ. ಆಗ ನೀವೇ ನನ್ನನ್ನು ಕಳುಹಿಸಿರುವಿರಿ ಎಂದೂ ನನ್ನನ್ನು ಪ್ರೀತಿಸಿದಂತೆಯೇ ಇವರನ್ನು ನೀವು ಪ್ರೀತಿಸಿರುವಿರಿ ಎಂದೂ ಲೋಕಕ್ಕೆ ಮನವರಿಕೆ ಆಗುವುದು.</verse>
				<verse number="24">ಪಿತನೇ, ಇವರನ್ನು ನೀವು ನನಗೆ ಕೊಟ್ಟಿರುವಿರಿ. ಜಗತ್ತು ಉಂಟಾಗುವ ಮೊದಲೇ ನೀವು ನನ್ನನ್ನು ಪ್ರೀತಿಸಿ ನನಗಿತ್ತ ಮಹಿಮೆಯನ್ನು ಇವರೂ ಕಾಣುವಂತೆ ನಾನಿದ್ದಲ್ಲಿ ಇವರೂ ಇರಬೇಕೆಂದು ಆಶಿಸುತ್ತೇನೆ.</verse>
				<verse number="25">ನೀತಿಸ್ವರೂಪಿಯಾದ ಪಿತನೇ, ಲೋಕವು ನಿಮ್ಮನ್ನು ಅರಿತುಕೊಳ್ಳಲಿಲ್ಲ. ಆದರೆ ನಾನು ಅರಿತಿದ್ದೇನೆ. ನನ್ನನ್ನು ಕಳುಹಿಸಿದವರು ನೀವೆಂದು ಇವರು ತಿಳಿದುಕೊಂಡಿದ್ದಾರೆ.</verse>
				<verse number="26">ನಿಮ್ಮ ನಾಮವನ್ನು ನಾನು ಇವರಿಗೆ ತಿಳಿಯಪಡಿಸಿದ್ದೇನೆ; ಇನ್ನೂ ತಿಳಿಯಪಡಿಸುತ್ತೇನೆ. ಹೀಗೆ ನೀವು ನನ್ನಲ್ಲಿಟ್ಟ ಪ್ರೀತಿಯು ಇವರಲ್ಲಿಯೂ ಇರುವಂತಾಗುವುದು; ನಾನೂ ಅವರಲ್ಲಿ ಇರುವಂತಾಗುವುದು,” ಎಂದು ಹೇಳಿದರು.</verse>
			</chapter>
			<chapter number="18">
				<verse number="1">ಯೇಸು ಸ್ವಾಮಿ ಹೀಗೆ ಹೇಳಿದ ಬಳಿಕ ತಮ್ಮ ಶಿಷ್ಯರೊಡನೆ ಹೊರಟು, ಕೆದ್ರೋನ್ ಹಳ್ಳವನ್ನು ದಾಟಿ, ಅಲ್ಲೇ ಇದ್ದ ತೋಟವನ್ನು ಹೊಕ್ಕರು.</verse>
				<verse number="2">ಅವರು ತಮ್ಮ ಶಿಷ್ಯರೊಡನೆ ಆಗಾಗ ಅಲ್ಲಿಗೆ ಬರುವುದು ವಾಡಿಕೆ. ಅವರನ್ನು ಹಿಡಿದುಕೊಡಲಿದ್ದ ಯೂದನಿಗೆ ಆ ಸ್ಥಳ ಚೆನ್ನಾಗಿ ಗೊತ್ತಿತ್ತು.</verse>
				<verse number="3">ಆದುದರಿಂದ ಯೂದನು ಸೈನಿಕರ ಒಂದು ತಂಡವನ್ನೂ ಮುಖ್ಯಯಾಜಕರು ಮತ್ತು ಫರಿಸಾಯರು ಕಳುಹಿಸಿದ ಕಾವಲಾಳುಗಳನ್ನೂ ಕರೆದುಕೊಂಡು ದೀವಟಿಗೆ, ಪಂಜು ಮತ್ತು ಆಯುಧಗಳ ಸಮೇತ ಅಲ್ಲಿಗೆ ಬಂದನು.</verse>
				<verse number="4">ಯೇಸು ಸ್ವಾಮಿಗೆ ತಮಗೆ ಸಂಭವಿಸಲಿರುವುದೆಲ್ಲವೂ ತಿಳಿದಿತ್ತು. ಎಂದೇ ಮುಂದೆ ಬಂದು, “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಿದರು.</verse>
				<verse number="5">ಅವರು, “ನಜರೇತಿನ ಯೇಸುವನ್ನು,” ಎಂದರು. ಯೇಸು, “ನಾನೇ ಆತ,” ಎಂದು ಉತ್ತರಕೊಟ್ಟರು. ಅವರನ್ನು ಹಿಡಿದುಕೊಡಲಿದ್ದ ಗುರುದ್ರೋಹಿ ಯೂದನು ಅವರ ಸಂಗಡವೇ ನಿಂತುಕೊಂಡಿದ್ದನು.</verse>
				<verse number="6">“ನಾನೇ ಆತನು,” ಎಂದು ಯೇಸು ನುಡಿಯುತ್ತಲೇ, ಅವರೆಲ್ಲರೂ ಹಿಂದೆ ಸರಿದು ನೆಲದ ಮೇಲೆ ಬಿದ್ದರು.</verse>
				<verse number="7">ಯೇಸು ಮತ್ತೊಮ್ಮೆ, “ನೀವು ಯಾರನ್ನು ಹುಡುಕುತ್ತಿದ್ದೀರಿ?” ಎಂದು ಕೇಳಲು, “ನಜರೇತಿನ ಯೇಸುವನ್ನು,” ಎಂದು ಉತ್ತರಬಂದಿತು.</verse>
				<verse number="8">ಅದಕ್ಕೆ ಯೇಸು, “ನಾನೇ ಆತನೆಂದು ನಿಮಗೆ ಆಗಲೇ ಹೇಳಿದೆ. ನೀವು ಹುಡುಕುತ್ತಾ ಇರುವುದು ನನ್ನನ್ನಾದರೆ, ಮಿಕ್ಕ ಇವರನ್ನು ಹೋಗಬಿಡಿ,” ಎಂದು ನುಡಿದರು.</verse>
				<verse number="9">(’ನೀವು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ಕಳೆದುಕೊಳ್ಳಲಿಲ್ಲ’ ಎಂದು ತಾವೇ ನುಡಿದ ಮಾತು ನೆರವೇರುವಂತೆ ಯೇಸು ಹೀಗೆಂದರು).</verse>
				<verse number="10">ಅಷ್ಟರೊಳಗೆ ಸಿಮೋನ ಪೇತ್ರನು ತನ್ನಲ್ಲಿದ್ದ ಖಡ್ಗವನ್ನು ಹಿರಿದು, ಪ್ರಧಾನಯಾಜಕನ ಸೇವಕನಾದ ಮಾಲ್ಕನ ಬಲಗಿವಿಯನ್ನು ಕತ್ತರಿಸಿಬಿಟ್ಟನು.</verse>
				<verse number="11">ಆಗ ಯೇಸು ಪೇತ್ರನಿಗೆ, “ನಿನ್ನ ಖಡ್ಗವನ್ನು ಒರೆಯಲ್ಲಿ ಹಾಕು, ನನ್ನ ಪಿತನೇ ಕೊಟ್ಟಿರುವ ಕಷ್ಟದ ಕೊಡವಿದು; ಇದರಲ್ಲಿರುವುದನ್ನು ನಾನು ಕುಡಿಯದೆಹೋದರೆ ಹೇಗೆ?” ಎಂದು ನುಡಿದರು.</verse>
				<verse number="12">ಅನಂತರ ಸೈನಿಕರು, ಸಹಸ್ರಾಧಿಪತಿ ಹಾಗು ಯೆಹೂದ್ಯರು ಕಳುಹಿಸಿದ್ದ ಕಾವಲಾಳುಗಳು ಯೇಸುವನ್ನು ಹಿಡಿದು ಕಟ್ಟಿ ಮೊದಲು ಅನ್ನನ ಬಳಿಗೆ ಕೊಂಡೊಯ್ದರು.</verse>
				<verse number="13">ಅನ್ನನು, ಆ ವರ್ಷ ಪ್ರಧಾನಯಾಜಕನಾಗಿದ್ದ ಕಾಯಫನ ಮಾವ.</verse>
				<verse number="14">ಸಮಸ್ತ ಜನತೆಗಾಗಿ ಒಬ್ಬನು ಸತ್ತರೆ ವಿಹಿತವೆಂದು ಸಲಹೆಕೊಟ್ಟವನು ಈ ಕಾಯಫನೇ.</verse>
				<verse number="15">ಸಿಮೋನ್ ಪೇತ್ರನು ಮತ್ತು ಪ್ರಧಾನಯಾಜಕನಿಗೆ ಪರಿಚಿತನಾಗಿದ್ದ ಇನ್ನೊಬ್ಬ ಶಿಷ್ಯನು ಯೇಸು ಸ್ವಾಮಿಯನ್ನು ಹಿಂಬಾಲಿಸುತ್ತಾ ಹೋದರು.ಪರಿಚಿತನಾಗಿದ್ದ ಶಿಷ್ಯನು ಯೇಸುವಿನೊಡನೆ ಪ್ರಧಾನಯಾಜಕನ ಮನೆಯ ಅಂಗಳವನ್ನು ಹೊಕ್ಕನು.</verse>
				<verse number="16">ಪೇತ್ರನು ಹೊರಗಡೆ ಬಾಗಿಲ ಬಳಿಯಲ್ಲೇ ನಿಂತನು. ಪರಿಚಿತನಾಗಿದ್ದವನು ಅನಂತರ ಹೊರಗೆ ಬಂದು ದ್ವಾರಪಾಲಕಿಗೆ ಹೇಳಿ ಪೇತ್ರನನ್ನು ಒಳಕ್ಕೆ ಕರೆದುಕೊಂಡುಹೋದನು.</verse>
				<verse number="17">ಆ ದ್ವಾರಪಾಲಕಿಯು ಪೇತ್ರನನ್ನು ನೋಡಿ, “ನೀನೂ ಯೇಸುವಿನ ಶಿಷ್ಯರಲ್ಲಿ ಒಬ್ಬನಲ್ಲವೆ?” ಎಂದು ಕೇಳಿದಳು. ಅದಕ್ಕೆ ಪೇತ್ರನು, “ಇಲ್ಲ, ನಾನಲ್ಲ,” ಎಂದುಬಿಟ್ಟನು.</verse>
				<verse number="18">ಆಗ ಚಳಿಯಿದ್ದುದರಿಂದ ಸೇವಕರೂ ಕಾವಲಾಳುಗಳೂ ಇದ್ದಲಿನ ಬೆಂಕಿಮಾಡಿ, ಸುತ್ತಲೂ ನಿಂತು ಚಳಿಕಾಯಿಸಿಕೊಳ್ಳುತ್ತಿದ್ದರು. ಪೇತ್ರನೂ ಅವರ ಸಂಗಡ ನಿಂತುಕೊಂಡು ಚಳಿಕಾಯಿಸಿಕೊಳ್ಳತೊಡಗಿದನು.</verse>
				<verse number="19">ಅಷ್ಟರಲ್ಲಿ ಪ್ರಧಾನಯಾಜಕನು ಯೇಸು ಸ್ವಾಮಿಯನ್ನು ಅವರ ಶಿಷ್ಯರ ವಿಷಯವಾಗಿ ಹಾಗು ಬೋಧನೆಯ ವಿಷಯವಾಗಿ ವಿಚಾರಿಸಿದನು.</verse>
				<verse number="20">ಆಗ ಯೇಸು ಸ್ವಾಮಿ, “ನಾನು ಬಹಿರಂಗವಾಗಿಯೇ ಜನರೆಲ್ಲರೂ ಕೇಳುವಂತೆ ಮಾತನಾಡಿದ್ದೇನೆ; ಯೆಹೂದ್ಯರೆಲ್ಲರು ಸಭೆಸೇರುವ ಪ್ರಾರ್ಥನಾಮಂದಿರಗಳಲ್ಲಿಯೂ ಮಹಾದೇವಾಲಯದಲ್ಲಿಯೂ ನಾನು ಯಾವಾಗಲೂ ಬೋಧನೆಮಾಡಿಕೊಂಡು ಬಂದಿದ್ದೇನೆ. ಮುಚ್ಚುಮರೆಯಾಗಿ ಏನನ್ನೂ ಹೇಳಿಲ್ಲ.</verse>
				<verse number="21">ನನ್ನನ್ನು ವಿಚಾರಿಸುವುದೇಕೆ? ನಾನು ಹೇಳಿದ್ದನ್ನು ಯಾರು ಕೇಳಿದ್ದಾರೋ ಅವರನ್ನೇ ವಿಚಾರಿಸಿರಿ. ನಾನು ಬೋಧನೆಮಾಡಿದ್ದು ಏನೆಂದು ಅವರು ಬಲ್ಲರು,” ಎಂದು ಉತ್ತರಕೊಟ್ಟರು.</verse>
				<verse number="22">ಯೇಸು ಹೀಗೆ ಹೇಳಲು ಬಳಿಯಲ್ಲೇ ನಿಂತಿದ್ದ ಕಾವಲಾಳೊಬ್ಬನು, “ಪ್ರಧಾನ ಯಾಜಕರಿಗೆ ಉತ್ತರಕೊಡುವುದು ಹೀಗೆಯೇ?” ಎಂದು ಕೆನ್ನೆಗೆ ಹೊಡೆದನು.</verse>
				<verse number="23">ಆಗ ಯೇಸು, “ನಾನು ಆಡಿದ್ದು ತಪ್ಪಾಗಿದ್ದರೆ, ತಪ್ಪನ್ನು ತೋರಿಸಿಕೊಡು; ಸತ್ಯವಾಗಿದ್ದರೆ ಏಕೆ ಹೊಡೆಯುತ್ತೀ?” ಎಂದರು.</verse>
				<verse number="24">ಆಗ ಅನ್ನನು ಯೇಸುವನ್ನು ಬಂಧಿಸಿ ಕಾಯಫನ ಬಳಿಗೆ ಕಳುಹಿಸಿದನು.</verse>
				<verse number="25">ಇತ್ತ ಪೇತ್ರನು ನಿಂತು ಚಳಿಕಾಯಿಸಿಕೊಳ್ಳುತ್ತಾ ಇದ್ದನು. ಅಲ್ಲಿದ್ದವರು, “ನೀನು ಯೇಸುವಿನ ಶಿಷ್ಯರಲ್ಲಿ ಒಬ್ಬನಲ್ಲವೇ?’ ಎಂದು ಕೇಳಿದರು. ಪೇತ್ರನು, “ಇಲ್ಲ, ನಾನು ಶಿಷ್ಯನಲ್ಲ,” ಎಂದು ನಿರಾಕರಿಸಿದನು.</verse>
				<verse number="26">ಪ್ರಧಾನಯಾಜಕನ ಸೇವಕರಲ್ಲಿ ಒಬ್ಬನು, (ಇವನು ಪೇತ್ರನು ಕಿವಿ ಕತ್ತರಿಸಿದವನ ನೆಂಟ) “ನಿನ್ನನ್ನು ಆತನೊಡನೆ ತೋಟದಲ್ಲಿ ನಾನು ನೋಡಲಿಲ್ಲವೇ?” ಎಂದು ಕೇಳಿದನು.</verse>
				<verse number="27">ಪೇತ್ರನು ಪುನಃ ಅಲ್ಲಗಳೆದನು. ಕೂಡಲೇ ಕೋಳಿ ಕೂಗಿತು.</verse>
				<verse number="28">ಆಮೇಲೆ ಅವರು ಯೇಸುವನ್ನು ಕಾಯಫನ ಮನೆಯಿಂದ ರಾಜ್ಯಪಾಲನ ನಿವಾಸಕ್ಕೆ ಕೊಂಡೊಯ್ದರು. ಆಗ ಮುಂಜಾನೆ, ಅರಮನೆಯೊಳಗೆ ಹೋದರೆ ಮಡಿಗೆಟ್ಟು ಹಬ್ಬದೂಟಕ್ಕೆ ಅಡ್ಡಿಯಾದೀತೆಂದು ಅವರೆಲ್ಲರು ಹೊರಗೇ ನಿಂತರು.</verse>
				<verse number="29">ಆದುದರಿಂದ ಪಿಲಾತನೇ ಅವರ ಬಳಿಗೆ ಬಂದು, “ಈತನ ಮೇಲೆ ನಿಮ್ಮ ದೂರು ಏನು?” ಎಂದು ಕೇಳಿದನು.</verse>
				<verse number="30">ಅವರು, “ಇವನು ಅಪರಾಧಿಯಲ್ಲದಿದ್ದರೆ, ಇವನನ್ನು ನಿಮಗೆ ತಂದೊಪ್ಪಿಸುತ್ತಿರಲಿಲ್ಲ,” ಎಂದರು.</verse>
				<verse number="31">ಅದಕ್ಕೆ ಪಿಲಾತನು, “ಹಾಗಾದರೆ ನೀವೇ ಕರೆದುಕೊಂಡುಹೋಗಿ, ನಿಮ್ಮ ಧರ್ಮಶಾಸ್ತ್ರದ ಪ್ರಕಾರ ಈತನಿಗೆ ತೀರ್ಪುಕೊಡಿ,” ಎಂದನು. ಯೆಹೂದ್ಯರು, “ಮರಣದಂಡನೆ ವಿಧಿಸುವ ಅಧಿಕಾರ ನಮಗಿಲ್ಲವಲ್ಲಾ,” ಎಂದು ಉತ್ತರಿಸಿದರು.</verse>
				<verse number="32">ಯೇಸು ತಮಗೆ ಯಾವ ಬಗೆಯ ಮರಣ ಕಾದಿರುವುದೆಂದು ಸೂಚಿಸಿ ಹೇಳಿದ ಮಾತು ಹೀಗೆ ನೆರವೇರುವಂತಾಯಿತು.</verse>
				<verse number="33">ಆಗ ಪಿಲಾತನು ಅರಮನೆಯೊಳಗೆ ಹೋಗಿ ಯೇಸು ಸ್ವಾಮಿಯನ್ನು ಕರೆಯಿಸಿ, “ನೀನು ಯೆಹೂದ್ಯರ ಅರಸನೋ?’ ಎಂದು ಕೇಳಿದನು.</verse>
				<verse number="34">ಅದಕ್ಕೆ ಯೇಸು, “ನೀವಾಗಿಯೇ ಇದನ್ನು ಹೇಳುತ್ತಿರುವಿರೋ ಅಥವಾ ಬೇರೆ ಯಾರಾದರೂ ನನ್ನನ್ನು ಕುರಿತು ಹೀಗೆ ಹೇಳಿದರೋ?” ಎನ್ನಲು</verse>
				<verse number="35">ಪಿಲಾತನು, “ನಾನೇನು ಯೆಹೂದ್ಯನೇ? ನಿನ್ನ ಸ್ವಂತ ಜನರು ಮತ್ತು ಮುಖ್ಯ ಯಾಜಕರು ನಿನ್ನನ್ನು ನನ್ನ ಕೈಗೆ ಒಪ್ಪಿಸಿದ್ದಾರೆ. ನೀನು ಏನು ಮಾಡಿದ್ದೀಯಾ?” ಎಂದು ಕೇಳಿದನು.</verse>
				<verse number="36">ಅದಕ್ಕೆ ಯೇಸು, “ನನ್ನ ಸಾಮ್ರಾಜ್ಯ ಈ ಲೋಕದ್ದಲ್ಲ, ನನ್ನ ಸಾಮ್ರಾಜ್ಯ ಈ ಲೋಕದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಬೀಳದಂತೆ ನನ್ನ ಅನುಯಾಯಿಗಳು ಕಾದಾಡುತ್ತಿದ್ದರು. ನಿಜವಾಗಿಯೂ ನನ್ನ ಸಾಮ್ರಾಜ್ಯ ಇಹಲೋಕದ್ದಲ್ಲ,” ಎಂದರು.</verse>
				<verse number="37">ಪಿಲಾತನು, “ಹಾಗಾದರೆ ನೀನೊಬ್ಬ ಅರಸನೋ?’ ಎಂದು ಕೇಳಲು ಯೇಸು, “ ‘ಅರಸ’ ಎನ್ನುವುದು ನೀವು ಹೇಳುವ ಮಾತು. ಸತ್ಯವನ್ನು ಕುರಿತು ಸಾಕ್ಷಿ ಹೇಳುವುದು ನನ್ನ ಕೆಲಸ. ಅದಕ್ಕಾಗಿಯೇ ನಾನು ಹುಟ್ಟಿದುದು. ಅದಕ್ಕಾಗಿಯೇ ನಾನು ಜಗತ್ತಿಗೆ ಬಂದುದು. ಸತ್ಯಪರರೆಲ್ಲರೂ ನನ್ನ ಮಾತಿಗೆ ಕಿವಿಗೊಡುತ್ತಾರೆ,” ಎಂದು ಹೇಳಿದರು.</verse>
				<verse number="38">ಆಗ ಪಿಲಾತನು, “ಸತ್ಯ, ಸತ್ಯ ಎಂದರೆ ಏನು?” ಎಂದು ಪ್ರಶ್ನಿಸಿ ಅಲ್ಲಿ ನಿಲ್ಲದೆ ಹೊರಗೆಬಂದನು.</verse>
				<verse number="39">ಹೀಗೆ ಪಿಲಾತನು ಹೊರಗೆ ಯೆಹೂದ್ಯರ ಬಳಿಗೆ ಬಂದು, “ನನಗೆ ಈತನಲ್ಲಿ ಯಾವ ಅಪರಾಧವೂ ಕಾಣುವುದಿಲ್ಲ. ಪಾಸ್ಕಹಬ್ಬದ ಸಂದರ್ಭದಲ್ಲಿ ಒಬ್ಬ ಸೆರೆಯಾಳನ್ನು ಬಿಡುಗಡೆಮಾಡುವ ಪದ್ಧತಿಯಿದೆಯಷ್ಟೆ? ಆದ್ದರಿಂದ ನೀವು ಬಯಸಿದರೆ ಯೆಹೂದ್ಯರ ಅರಸನನ್ನು ನಾನು ಬಿಡುಗಡೆ ಮಾಡುತ್ತೇನೆ,” ಎಂದು ಹೇಳಿದನು.</verse>
				<verse number="40">ಅದಕ್ಕೆ ಅವರು, “ಬೇಡ, ಇವನು ಬೇಡ. ನಮಗೆ ಬರಬ್ಬನನ್ನು ಬಿಟ್ಟುಕೊಡಿ,” ಎಂದು ಬೊಬ್ಬೆಹಾಕಿದರು. ಬರಬ್ಬನೋ ಒಬ್ಬ ದರೋಡೆಕೋರನಾಗಿದ್ದನು.</verse>
			</chapter>
			<chapter number="19">
				<verse number="1">ಆಮೇಲೆ ಪಿಲಾತನು ಯೇಸು ಸ್ವಾಮಿಯನ್ನು ಅಲ್ಲಿಂದ ಕರೆದೊಯ್ದು ಕೊರಡೆಗಳಿಂದ ಹೊಡೆಸಿದನು.</verse>
				<verse number="2">ಸೈನಿಕರೋ ಮುಳ್ಳಿನ ಕಿರೀಟವನ್ನು ಹೆಣೆದು ಅವರ ತಲೆಗೆ ಮುಡಿಸಿ, ಕೆನ್ನೇರಳೆ ಬಣ್ಣದ ಅಂಗಿಯನ್ನು ಅವರಿಗೆ ಉಡಿಸಿ, ಹತ್ತಿರ ಬಂದು,</verse>
				<verse number="3">“ಯೆಹೂದ್ಯರ ಅರಸನೇ, ನಿನಗೆ ಶುಭವಾಗಲಿ,” ಎಂದು ಜರೆಯುತ್ತಾ ಅವರ ಕೆನ್ನೆಗೆ ಹೊಡೆಯತೊಡಗಿದರು.</verse>
				<verse number="4">ಪಿಲಾತನು ಮತ್ತೆ ಹೊರಗೆ ಬಂದು ಯೆಹೂದ್ಯರಿಗೆ, “ನೋಡಿ, ನಾನು ಇವನನ್ನು ನಿಮ್ಮ ಮುಂದೆ ತರುತ್ತಿದ್ದೇನೆ. ನನಗೆ ಇವನಲ್ಲಿ ಯಾವ ಅಪರಾಧವೂ ಕಾಣಿಸುತ್ತಿಲ್ಲ ಎಂಬುದು ನಿಮಗೆ ತಿಳಿದಿರಲಿ,” ಎಂದು ಹೇಳಿದನು.</verse>
				<verse number="5">ಆಗ ಯೇಸು ಮುಳ್ಳಿನ ಕಿರೀಟವನ್ನೂ ಕೆನ್ನೇರಳೆ ಬಣ್ಣದ ಅಂಗಿಯನ್ನೂ ಧರಿಸಿದವರಾಗಿ ಹೊರಕ್ಕೆ ಬಂದರು. ಪಿಲಾತನು, “ಇಗೋ, ಈ ಮನುಷ್ಯ!” ಎಂದನು.</verse>
				<verse number="6">ಮುಖ್ಯಯಾಜಕರೂ ಕಾವಲಾಳುಗಳೂ ಯೇಸುವನ್ನು ಕಂಡೊಡನೆ, “ಇವನನ್ನು ಶಿಲುಬೆಗೇರಿಸಿ, ಶಿಲುಬೆಗೇರಿಸಿ,” ಎಂದು ಬೊಬ್ಬೆಹಾಕಿದರು. ಆಗ ಪಿಲಾತನು, “ಬೇಕಾದರೆ ನೀವೇ ಇವನನ್ನು ಕರೆದುಕೊಂಡು ಹೋಗಿ ಶಿಲುಬೆಗೇರಿಸಿ, ನನಗಾದರೋ ಇವನಲ್ಲಿ ಯಾವ ಅಪರಾಧವೂ ಕಾಣಿಸಲಿಲ್ಲ,” ಎಂದನು.</verse>
				<verse number="7">ಅದಕ್ಕೆ ಯೆಹೂದ್ಯರು, “ನಮಗೊಂದು ಕಾನೂನು ಉಂಟು. ಅದರ ಮೇರೆಗೆ ಇವನು ಸಾಯಲೇಬೇಕು. ಏಕೆಂದರೆ, ತಾನು ದೇವರ ಪುತ್ರನೆಂದು ಹೇಳಿಕೊಂಡಿದ್ದಾನೆ,” ಎಂದು ಉತ್ತರಕೊಟ್ಟರು.</verse>
				<verse number="8">ಇದನ್ನು ಕೇಳಿದ್ದೇ, ಪಿಲಾತನಿಗೆ ಮತ್ತಷ್ಟು ಭಯವಾಯಿತು.</verse>
				<verse number="9">ಅವನು ಮತ್ತೆ ಅರಮನೆಯ ಒಳಕ್ಕೆ ಬಂದು, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಉತ್ತರಕೊಡಲಿಲ್ಲ.</verse>
				<verse number="10">ಆಗ ಪಿಲಾತನು, “ನನ್ನೊಡನೆ ನೀನು ಮಾತನಾಡುವುದಿಲ್ಲವೇ? ನಿನ್ನನ್ನು ಬಿಡುಗಡೆ ಮಾಡುವುದಕ್ಕೂ ನಿನ್ನನ್ನು ಶಿಲುಬೆಗೇರಿಸುವುದಕ್ಕೂ ನನಗೆ ಅಧಿಕಾರವಿದೆ ಎಂಬುದು ನಿನಗೆ ತಿಳಿಯದೋ?’ ಎಂದನು.</verse>
				<verse number="11">ಅದಕ್ಕೆ ಯೇಸು, “ನಿಮಗೆ ಮೇಲಿನಿಂದ ಕೊಟ್ಟ ಹೊರತು ನನ್ನ ಮೇಲೆ ನಿಮಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದ್ದರಿಂದ ನನ್ನನ್ನು ನಿಮ್ಮ, ಕೈಗೆ ಒಪ್ಪಿಸಿದವನಿಗೇ ಪಾಪ ಹೆಚ್ಚು,” ಎಂದು ನುಡಿದರು.</verse>
				<verse number="12">ಇದನ್ನು ಕೇಳಿದ ಮೇಲೆ ಪಿಲಾತನು ಯೇಸುವನ್ನು ಬಿಡುಗಡೆ ಮಾಡಲು ಪ್ರಯತ್ನಿಸಿದನು. ಯೆಹೂದ್ಯರಾದರೋ, “ಇವನನ್ನು ಬಿಡುಗಡೆ ಮಾಡಿದರೆ, ನೀವು ರೋಮ್ ಚಕ್ರವರ್ತಿಯ ಮಿತ್ರರಲ್ಲ; ತಾನೇ ಅರಸನೆಂದು ಹೇಳಿಕೊಳ್ಳುವ ಇವನು ರೋಮ್ ಚಕ್ರವರ್ತಿಗೆ ಶತ್ರು,” ಎಂದು ಕೂಗಿಕೊಂಡರು.</verse>
				<verse number="13">ಅವರ ಆ ಕೂಗನ್ನು ಕೇಳಿ ಪಿಲಾತನು ಯೇಸುವನ್ನು ಹೊರಗೆ ಕರೆಯಿಸಿದನು. ‘ಹಾಸುಗಲ್ಲು’ ಎಂಬ ಕಟ್ಟೆಯ ಮೇಲಿದ್ದ ನ್ಯಾಯಪೀಠದ ಮೇಲೆ ಕುಳಿತುಕೊಂಡನು. ಯೆಹೂದ್ಯರ ಭಾಷೆಯಲ್ಲಿ ಆ ಸ್ಥಳಕ್ಕೆ ‘ಗಬ್ಬಥ’ ಎಂದು ಹೆಸರು.</verse>
				<verse number="14">ಅಂದು ಹಬ್ಬದ ಹಿಂದಿನ ದಿನ, ಮಧ್ಯಾಹ್ನ ಹನ್ನೆರಡು ಗಂಟೆ ಇರಬಹುದು. ಪಿಲಾತನು ಯೆಹೂದ್ಯರನ್ನು ನೋಡಿ, “ಇಗೋ, ನಿಮ್ಮ ಅರಸನು,” ಎಂದು ಹೇಳಿದನು.</verse>
				<verse number="15">ಅವರಾದರೋ, “ಕೊಲ್ಲಿರಿ, ಕೊಲ್ಲಿರಿ; ಶಿಲುಬೆಗೇರಿಸಿರಿ,” ಎಂದು ಕಿರುಚಿದರು. ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೇರಿಸಲೇ?” ಎಂದನು. ಅದಕ್ಕೆ ಮುಖ್ಯಯಾಜಕರು, “ರೋಮ್ ಚಕ್ರವರ್ತಿಯ ಹೊರತು ನಮಗೆ ಬೇರೆ ಅರಸನಿಲ್ಲ,” ಎಂದು ಉತ್ತರಕೊಟ್ಟರು.</verse>
				<verse number="16">ಕಡೆಗೆ ಪಿಲಾತನು ಯೇಸುವನ್ನು ಶಿಲುಬೆಗೇರಿಸುವುದಕ್ಕಾಗಿ ಅವರಿಗೆ ಒಪ್ಪಿಸಿಬಿಟ್ಟನು. ಅವರು ಯೇಸುವನ್ನು ತಮ್ಮ ವಶಕ್ಕೆ ತೆಗೆದುಕೊಂಡರು.</verse>
				<verse number="17">ಯೇಸು ಸ್ವಾಮಿ ತಮ್ಮ ಶಿಲುಬೆಯನ್ನು ತಾವೇ ಹೊತ್ತುಕೊಂಡು ‘ಕಪಾಲ’ ಎಂಬ ಸ್ಥಳಕ್ಕೆ ಹೋದರು. ಇದಕ್ಕೆ ಯೆಹೂದ್ಯರ ಭಾಷೆಯಲ್ಲಿ ‘ಗೊಲ್ಗೊಥಾ’ ಎಂದು ಹೆಸರು.</verse>
				<verse number="18">ಅಲ್ಲಿ ಯೇಸುವನ್ನು ಶಿಲುಬೆಗೇರಿಸಿದರು. ಅವರ ಅಕ್ಕಪಕ್ಕದಲ್ಲಿ ಇನ್ನಿಬ್ಬರನ್ನೂ ಶಿಲುಬೆಗೆ ಹಾಕಿದರು.</verse>
				<verse number="19">ಪಿಲಾತನು ಒಂದು ಫಲಕದ ಮೇಲೆ, ‘ನಜರೇತಿನ ಯೇಸು, ಯೆಹೂದ್ಯರ ಅರಸ’ ಎಂದು ಬರೆಸಿ ಶಿಲುಬೆಯ ಮೇಲ್ಗಡೆ ಇರಿಸಿದರು.</verse>
				<verse number="20">ಯೇಸುವನ್ನು ಶಿಲುಬೆಗೇರಿಸಿದ ಸ್ಥಳ ನಗರಕ್ಕೆ ಸಮೀಪದಲ್ಲೇ ಇದ್ದುದರಿಂದ, ಹಲವು ಮಂದಿ ಯೆಹೂದ್ಯರು ಆ ಫಲಕವನ್ನು ಓದಿದರು. ಅದನ್ನು ಹಿಬ್ರಿಯ, ಲತೀನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆಯಲಾಗಿತ್ತು.</verse>
				<verse number="21">ಆದುದರಿಂದ ಯೆಹೂದ್ಯರ ಮುಖ್ಯಯಾಜಕರು ಪಿಲಾತನಿಗೆ: “ಯೆಹೂದ್ಯರ ಅರಸ ಎಂದು ಬರೆಯುವುದು ಬೇಡ, ತಾನು ‘ಯೆಹೂದ್ಯರ ಅರಸನೆಂದು ಹೇಳಿಕೊಂಡವನು’ ಎಂದು ಬರೆಯಿರಿ,” ಎಂದರು.</verse>
				<verse number="22">ಅದಕ್ಕೆ ಪಿಲಾತನು, “ನಾನು ಬರೆದುದು ಬರೆದಾಯಿತು,” ಎಂದನು.</verse>
				<verse number="23">ಯೇಸುವನ್ನು ಶಿಲುಬೆಗೇರಿಸಿದ ಬಳಿಕ ಸೈನಿಕರು ಯೇಸುವಿನ ಬಟ್ಟೆಗಳನ್ನು ತೆಗೆದುಕೊಂಡು ಒಬ್ಬೊಬ್ಬರಿಗೆ ಒಂದೊಂದು ಪಾಲಿನಂತೆ ನಾಲ್ಕು ಪಾಲುಮಾಡಿ ಹಂಚಿಕೊಂಡರು. ಅವರ ಒಳ ಅಂಗಿಯಾದರೋ ಹೊಲಿಗೆಯಿಲ್ಲದೆ ಮೇಲಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.</verse>
				<verse number="24">ಅದನ್ನು ತೆಗೆದುಕೊಂಡು ಅವರು ತಮ್ಮತಮ್ಮೊಳಗೆ, “ಇದನ್ನು ಹರಿಯುವುದು ಬೇಡ, ಚೀಟಿಹಾಕಿ ಯಾರ ಪಾಲಿಗೆ ಬರುವುದೋ, ನೋಡೋಣ,” ಎಂದು ಮಾತಾಡಿಕೊಂಡು ಹಾಗೆಯೆ ಮಾಡಿದರು. “ನನ್ನ ಬಟ್ಟೆಗಳನ್ನು ತಮ್ಮಲ್ಲಿ ಹಂಚಿಕೊಂಡರು; ನನ್ನ ಅಂಗಿಗಾಗಿ ಚೀಟು ಹಾಕಿದರು,” ಎಂಬ ಪವಿತ್ರಗ್ರಂಥದ ವಾಕ್ಯ ಹೀಗೆ ನೆರವೇರಿತು.</verse>
				<verse number="25">ಯೇಸುವಿನ ತಾಯಿ, ತಾಯಿಯ ಸಹೋದರಿ, ಕ್ಲೋಪನ ಹೆಂಡತಿ ಮರಿಯ ಮತ್ತು ಮಗ್ದಲದ ಮರಿಯ - ಇವರು ಶಿಲುಬೆಯ ಬಳಿಯಲ್ಲಿ ನಿಂತಿದ್ದರು.</verse>
				<verse number="26">ಯೇಸು ತಮ್ಮ ತಾಯನ್ನೂ ಆಕೆಯ ಪಕ್ಕದಲ್ಲಿ ನಿಂತಿದ್ದ ಆಪ್ತ ಶಿಷ್ಯನನ್ನೂ ನೋಡಿ, “ಅಮ್ಮಾ, ಇಗೋ, ನಿನ್ನ ಮಗ,” ಎಂದರು.</verse>
				<verse number="27">ಅನಂತರ ತಮ್ಮ ಶಿಷ್ಯನನ್ನು ಕುರಿತು, “ಇಗೋ, ನಿನ್ನ ತಾಯಿ,” ಎಂದರು. ಅಂದಿನಿಂದ ಆ ಶಿಷ್ಯನು ಆಕೆಯನ್ನು ತನ್ನ ಮನೆಯಲ್ಲೇ ಇರಿಸಿಕೊಂಡನು.</verse>
				<verse number="28">ಇದಾದ ಮೇಲೆ ಯೇಸು ಸ್ವಾಮಿ ನೆರವೇರಬೇಕಾದುದೆಲ್ಲವೂ ನೆರವೇರಿದೆ ಎಂದು ತಿಳಿದು ಪವಿತ್ರಗ್ರಂಥದಲ್ಲಿ ಬರೆದುದು ಈಡೇರುವಂತೆ, “ನನಗೆ ದಾಹವಾಗಿದೆ,” ಎಂದು ನುಡಿದರು.</verse>
				<verse number="29">ಬಳಿಯಲ್ಲೇ ಹುಳಿರಸ ತುಂಬಿದ ಪಾತ್ರೆಯೊಂದಿತ್ತು. ಅವರು ಸ್ಪಂಜನ್ನು ಆ ಹುಳಿರಸದಲ್ಲಿ ತೋಯಿಸಿ ಹಿಸೋಪಗಿಡದ ಕೋಲಿಗೆ ಸಿಕ್ಕಿಸಿ, ಯೇಸುವಿನ ಬಾಯಿಗೆ ಮುಟ್ಟಿಸಿದರು.</verse>
				<verse number="30">ಯೇಸು ಆ ಹುಳಿರಸವನ್ನು ಸೇವಿಸುತ್ತಲೇ, “ಎಲ್ಲಾ ನೆರವೇರಿತು,” ಎಂದು ನುಡಿದು ತಲೆಬಾಗಿ ತಮ್ಮ ಆತ್ಮವನ್ನು ಒಪ್ಪಿಸಿದರು.</verse>
				<verse number="31">ಅಂದು ಪಾಸ್ಕ ಹಬ್ಬದ ಹಿಂದಿನ ದಿನ. ಮಾರನೆಯ ದಿನ ಸಬ್ಬತ್ ದಿನವೂ ದೊಡ್ಡ ಹಬ್ಬವೂ ಆಗಿತ್ತು. ಸಬ್ಬತ್ ದಿನದಂದು ಶವಗಳು ಶಿಲುಬೆಯ ಮೇಲೆ ತೂಗಾಡುವುದು ಸರಿಯಲ್ಲ ಎಂದುಕೊಂಡು ಶಿಲುಬೆಗೇರಿಸಲಾಗಿದ್ದವರ ಕಾಲುಗಳನ್ನು ಮುರಿದು ಅವರ ಶವವನ್ನು ಅಂದೇ ತೆಗೆಯಿಸಿಬಿಡಲು ಯೆಹೂದ್ಯರು ಪಿಲಾತನಿಂದ ಅಪ್ಪಣೆ ಕೇಳಿಕೊಂಡರು.</verse>
				<verse number="32">ಅಂತೆಯೇ ಸೈನಿಕರು ಬಂದು ಯೇಸುವಿನೊಡನೆ ಶಿಲುಬೆಗೇರಿಸಲಾಗಿದ್ದ ಮೊದಲನೆಯವನ ಮತ್ತು ಎರಡನೆಯವನ ಕಾಲುಗಳನ್ನು ಮುರಿದರು.</verse>
				<verse number="33">ತರುವಾಯ ಯೇಸುವಿನ ಬಳಿಗೆ ಬಂದರು. ಯೇಸು ಆಗಲೇ ಸತ್ತುಹೋಗಿರುವುದನ್ನು ಕಂಡು, ಅವರ ಕಾಲುಗಳನ್ನು ಮುರಿಯಲಿಲ್ಲ.</verse>
				<verse number="34">ಆದರೂ ಸೈನಿಕರಲ್ಲಿ ಒಬ್ಬನು ಈಟಿಯಿಂದ ಅವರ ಪಕ್ಕೆಯನ್ನು ತಿವಿದನು. ಕೂಡಲೇ ರಕ್ತವೂ ನೀರೂ ಅಲ್ಲಿಂದ ಹೊರಗೆ ಹರಿದುಬಂದವು.</verse>
				<verse number="35">ಇದು ಕಣ್ಣಾರೆ ಕಂಡವನ ಹೇಳಿಕೆ. ಈ ಹೇಳಿಕೆ ಸತ್ಯವಾದುದು; ತಾನು ಸತ್ಯವನ್ನೇ ನುಡಿಯುತ್ತಿದ್ದೇನೆಂಬ ಅರಿವು ಅವನಿಗೆ ಇದೆ. ನೀವು ವಿಶ್ವಾಸಿಸಬೇಕೆಂದೇ ಆತನು ಇದನ್ನು ಹೇಳಿದ್ದಾನೆ.</verse>
				<verse number="36">‘ಆತನ ಎಲುಬೊಂದನ್ನು ಮುರಿಯಕೂಡದು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆ ವಾಕ್ಯ ನೆರವೇರುವಂತೆ ಹೀಗೆ ನಡೆಯಿತು.</verse>
				<verse number="37">‘ತಾವು ಇರಿದವನನ್ನೇ ಅವರು ನಿರೀಕ್ಷಿಸುವರು’ ಎನ್ನುತ್ತದೆ ಇನ್ನೊಂದು ವಾಕ್ಯ.</verse>
				<verse number="38">ಅರಿಮತಾಯ ಊರಿನ ಜೋಸೆಫ್ ಎಂಬುವನೂ ಕೂಡ ಯೇಸುವಿನ ಶಿಷ್ಯರಲ್ಲಿ ಒಬ್ಬನು. ಈತನು ಯೆಹೂದ್ಯರಿಗೆ ಹೆದರಿ ತಾನು ಶಿಷ್ಯನೆಂದು ತೋರಿಸಿಕೊಳ್ಳುತ್ತಿರಲಿಲ್ಲ. ಮೇಲೆ ಹೇಳಿದ್ದೆಲ್ಲ ನಡೆದಾದ ಮೇಲೆ ಈತನು ಯೇಸುವಿನ ಪಾರ್ಥಿವ ಶರೀರವನ್ನು ಕೊಂಡೊಯ್ಯಲು ಪಿಲಾತನಿಂದ ಅಪ್ಪಣೆ ಕೇಳಿದನು. ಪಿಲಾತನು ಒಪ್ಪಿಗೆ ಕೊಡಲು ಈತನು ಬಂದು ಪಾರ್ಥಿವ ಶರೀರವನ್ನು ಕೊಂಡೊಯ್ದನು.</verse>
				<verse number="39">ಈತನು ಮಾತ್ರವಲ್ಲ, ಹಿಂದೊಮ್ಮೆ ಯೇಸುವನ್ನು ರಾತ್ರಿಯಲ್ಲಿ ನೋಡಲು ಬಂದಿದ್ದ ನಿಕೊದೇಮನು ಕೂಡ ಅಲ್ಲಿಗೆ ಬಂದನು. ಇವನು ರಕ್ತಬೋಳ ಹಾಗೂ ಅಗರು ಕಲಸಿದ ಮೂವತ್ತು ಕಿಲೋಗ್ರಾಮಿನಷ್ಟು ಚೂರ್ಣವನ್ನು ತಂದಿದ್ದನು.</verse>
				<verse number="40">ಇವರು ಯೇಸುವಿನ ಪಾರ್ಥಿವ ಶರೀರವನ್ನು ತೆಗೆದು, ಯೆಹೂದ್ಯರ ಶವಸಂಸ್ಕಾರದ ಪದ್ಧತಿಯಂತೆ ಸುಗಂಧ ದ್ರವ್ಯಗಳನ್ನು ಹಾಕಿ ನಾರುಮಡಿಯಲ್ಲಿ ಸುತ್ತಿದರು.</verse>
				<verse number="41">ಯೇಸುವನ್ನು ಶಿಲುಬೆಗೇರಿಸಿದ ಸ್ಥಳದಲ್ಲಿ ಒಂದು ತೋಟವಿತ್ತು. ಆ ತೋಟದಲ್ಲಿ ಅದುವರೆಗೆ ಯಾರ ಶವವನ್ನೂ ಇಡದ ಹೊಸ ಸಮಾಧಿ ಇತ್ತು.</verse>
				<verse number="42">ಸಮಾಧಿಯು ಹತ್ತಿರದಲ್ಲೇ ಇದ್ದುದರಿಂದ ಹಾಗೂ ಮರುದಿನ ಪಾಸ್ಕಹಬ್ಬವಾದುದರಿಂದ ಯೇಸುವಿನ ಪಾರ್ಥಿವ ಶರೀರವನ್ನು ಅಲ್ಲೇ ಸಮಾಧಿಮಾಡಿದರು.</verse>
			</chapter>
			<chapter number="20">
				<verse number="1">ಅಂದು ಭಾನುವಾರ, ಮುಂಜಾನೆ. ಇನ್ನೂ ಕತ್ತಲಾಗಿತ್ತು. ಮಗ್ದಲದ ಮರಿಯಳು ಸಮಾಧಿಯ ಬಳಿಗೆ ಬಂದಳು. ಸಮಾಧಿಯ ಬಾಗಿಲಿಗೆ ಮುಚ್ಚಲಾಗಿದ್ದ ಕಲ್ಲು ಅಲ್ಲಿಂದ ತೆಗೆದುಹಾಕಿರುವುದನ್ನು ಕಂಡಳು.</verse>
				<verse number="2">ಆಗ ಆಕೆ ಸಿಮೋನ ಪೇತ್ರನ ಮತ್ತು ಯೇಸುವಿಗೆ ಆಪ್ತನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೆ ಓಡಿಬಂದು, “ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ; ಅವರನ್ನು ಎಲ್ಲಿ ಇಟ್ಟಿದ್ದಾರೋ ಗೊತ್ತಿಲ್ಲ,” ಎಂದು ಹೇಳಿದಳು.</verse>
				<verse number="3">ಇದನ್ನು ಕೇಳಿ ಪೇತ್ರನೂ ಇನ್ನೊಬ್ಬ ಶಿಷ್ಯನೂ ಸಮಾಧಿಯ ಕಡೆಗೆ ಹೊರಟರು.</verse>
				<verse number="4">ಇಬ್ಬರೂ ಓಡಿದರು. ಆ ಇನ್ನೊಬ್ಬ ಶಿಷ್ಯನು, ಪೇತ್ರನಿಗಿಂತ ಮುಂದೆ ಓಡಿ ಸಮಾಧಿಯನ್ನು ಮೊದಲು ತಲುಪಿದನು.</verse>
				<verse number="5">ಅವನು ಬಗ್ಗಿನೋಡಿದಾಗ ಅಲ್ಲಿ ನಾರುಬಟ್ಟೆಗಳು ಬಿದ್ದಿರುವುದು ಕಾಣಿಸಿತು. ಆದರೆ ಅವನು ಒಳಗೆ ನುಗ್ಗಲಿಲ್ಲ.</verse>
				<verse number="6">ಅವನ ಹಿಂದೆಯೇ ಸಿಮೋನ ಪೇತ್ರನು ಬಂದು ನೆಟ್ಟಗೆ ಸಮಾಧಿ ಒಳಗೆ ನುಗ್ಗಿದನು; ಅಲ್ಲಿ ನಾರುಮಡಿಗಳು ಬಿದ್ದಿರುವುದನ್ನು ಕಂಡನು.</verse>
				<verse number="7">ಯೇಸುವಿನ ತಲೆಗೆ ಸುತ್ತಿದ್ದ ಬಟ್ಟೆ, ಆ ನಾರುಮಡಿಗಳೊಡನೆ ಇರದೆ, ಅದನ್ನು ಮಡಚಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ಕಂಡನು.</verse>
				<verse number="8">ಸಮಾಧಿಯನ್ನು ಮೊದಲು ತಲುಪಿದ್ದ ಇನ್ನೊಬ್ಬ ಶಿಷ್ಯನೂ ಆಮೇಲೆ ಒಳಗೆ ನುಗ್ಗಿ ನೋಡಿದನು; ನೋಡಿ ನಂಬಿದನು.</verse>
				<verse number="9">ಯೇಸು ಸತ್ತಮೇಲೆ ಮರಳಿ ಜೀವಂತರಾಗಿ ಎದ್ದುಬರಬೇಕು, ಎಂಬ ಪವಿತ್ರಗ್ರಂಥದ ವಾಕ್ಯ ಅವರಿಗೆ ಅದುವರೆಗೆ ಅರ್ಥವಾಗಿರಲಿಲ್ಲ.</verse>
				<verse number="10">ತರುವಾಯ ಆ ಶಿಷ್ಯರು ತಮ್ಮ ಮನೆಗೆ ಹಿಂದಿರುಗಿದರು.</verse>
				<verse number="11">ಮರಿಯಳು ಅಳುತ್ತಾ ಸಮಾಧಿಯ ಹೊರಗೆ ನಿಂತುಕೊಂಡಿದ್ದಳು. ಆಕೆ ಅಳುತ್ತಾ ಸಮಾಧಿಯೊಳಗೆ ಬಗ್ಗಿನೋಡಿದಾಗ ಶ್ವೇತವಸ್ತ್ರಧಾರಿಗಳಾದ ಇಬ್ಬರು ದೇವದೂತರನ್ನು ಅಲ್ಲಿ ಕಂಡಳು. ಯೇಸುವಿನ ಪಾರ್ಥಿವ ಶರೀರವನ್ನು ಇಟ್ಟಿದ್ದ ಸ್ಥಳದಲ್ಲಿ ಒಬ್ಬನು ಅವರ ತಲೆಯಿದ್ದ ಕಡೆಯಲ್ಲೂ ಮತ್ತೊಬ್ಬನು ಕಾಲಿದ್ದ ಕಡೆಯಲ್ಲೂ ಕುಳಿತಿದ್ದರು.</verse>
				<verse number="12"></verse>
				<verse number="13">ಅವರು ಆಕೆಯನ್ನು, “ಏಕಮ್ಮಾ ಅಳುತ್ತಿರುವೆ?” ಎಂದು ಕೇಳಿದರು. “ನನ್ನ ಪ್ರಭುವನ್ನು ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ. ಎಲ್ಲಿ ಇಟ್ಟಿದ್ದಾರೋ ತಿಳಿಯದು,” ಎಂದಳು.</verse>
				<verse number="14">ಹಾಗೆ ಹೇಳಿ ಹಿಂದಕ್ಕೆ ತಿರುಗಿದಾಗ ಅಲ್ಲೇ ಯೇಸು ನಿಂತಿರುವುದು ಆಕೆಗೆ ಕಾಣಿಸಿತು. ಆದರೆ ಯೇಸುವೇ ಅವರೆಂದು ಆಕೆಗೆ ತಿಳಿಯಲಿಲ್ಲ.</verse>
				<verse number="15">ಯೇಸು, “ಏಕಮ್ಮಾ ಅಳುತ್ತಿರುವೇ? ಏನನ್ನು ಹುಡುಕುತ್ತಿರುವೇ?’ ಎಂದು ಕೇಳಿದಾಗಲೂ ಮರಿಯಳು ಅವರು ತೋಟಗಾರನೆಂದು ಭಾವಿಸಿ, “ಅಯ್ಯಾ, ನೀವೇನಾದರೂ ಅವರನ್ನು ಕೊಂಡೊಯ್ದಿದ್ದರೆ ಎಲ್ಲಿ ಇಟ್ಟಿರುವಿರಿ, ಹೇಳಿ; ನಾನು ತೆಗೆದುಕೊಂಡು ಹೋಗುತ್ತೇನೆ,” ಎಂದು ಹೇಳಿದಳು.</verse>
				<verse number="16">ಆಗ ಯೇಸು, “ಮರಿಯಾ” ಎಂದು ಹೆಸರಿಡಿದು ಕರೆದರು. ಆಕೆ ಹಿಂದಿರುಗಿ ನೋಡಿ, “ರಬ್ಬೂನಿ” ಎಂದಳು. (ಯೆಹೂದ್ಯರ ಭಾಷೆಯಲ್ಲಿ ಹಾಗೆಂದರೆ “ಗುರುದೇವಾ” ಎಂದರ್ಥ).</verse>
				<verse number="17">ಯೇಸು ಆಕೆಗೆ, “ನನ್ನನ್ನು ಹಿಡಿದುಕೊಂಡಿರಬೇಡ, ನಾನು ಇನ್ನೂ ಪಿತನ ಬಳಿಗೆ ಏರಿಹೋಗಿಲ್ಲ. ನೀನು ನನ್ನ ಸಹೋದರರ ಬಳಿಗೆ ಹೋಗಿ ನನ್ನ ಪಿತನೂ ನಿಮ್ಮ ಪಿತನೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನಲ್ಲಿಗೆ ನಾನು ಏರಿಹೋಗುತ್ತೇನೆಂದು ತಿಳಿಸು,” ಎಂದು ಹೇಳಿದರು.</verse>
				<verse number="18">ಮಗ್ದಲದ ಮರಿಯಳು ಶಿಷ್ಯರ ಬಳಿಗೆ ಬಂದು, “ನಾನು ಪ್ರಭುವನ್ನು ಕಂಡೆ. ಅವರು ಹೀಗೆಲ್ಲಾ ಹೇಳಿದರು,” ಎಂದು ತಿಳಿಸಿದಳು.</verse>
				<verse number="19">ಅದೇ ಭಾನುವಾರ ಸಂಜೆ ಶಿಷ್ಯರು ಒಂದು ಮನೆಯಲ್ಲಿ ಕೂಡಿದ್ದರು. ಯೆಹೂದ್ಯರಿಗೆ ಅಂಜಿ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡು ಒಳಗೇ ಇದ್ದರು. ಆಗ ಯೇಸು ಬಂದು ಅವರ ನಡುವೆ ನಿಂತರು.</verse>
				<verse number="20">“ನಿಮಗೆ ಶಾಂತಿ” ಎಂದು ಹೇಳಿ ತಮ್ಮ ಕೈಗಳನ್ನು ಮತ್ತು ಪಕ್ಕೆಗಳನ್ನು ತೋರಿಸಿದರು. ಪ್ರಭುವನ್ನು ಕಂಡು ಶಿಷ್ಯರಿಗೆ ಮಹದಾನಂದವಾಯಿತು.</verse>
				<verse number="21">ಯೇಸು ಪುನಃ, “ನಿಮಗೆ ಶಾಂತಿ, ಪಿತನು ನನ್ನನ್ನು ಕಳುಹಿಸಿದಂತೆಯೇ ನಾನೂ ನಿಮ್ಮನ್ನು ಕಳುಹಿಸುತ್ತೇನೆ,” ಎಂದರು.</verse>
				<verse number="22">ಅನಂತರ ಅವರ ಮೇಲೆ ಉಸಿರೂದಿ, “ಪವಿತ್ರಾತ್ಮರನ್ನು ಸ್ವೀಕರಿಸಿರಿ.</verse>
				<verse number="23">ಯಾರ ಪಾಪಗಳನ್ನು ನೀವು ಕ್ಷಮಿಸುತ್ತೀರೋ, ಅವರಿಗೆ ಅವನ್ನು ಕ್ಷಮಿಸಲಾಗುವುದು. ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಕ್ಷಮಿಸದೆ ಉಳಿಸಲಾಗುವುದು,” ಎಂದು ನುಡಿದರು.</verse>
				<verse number="24">ಹನ್ನೆರಡು ಮಂದಿಯಲ್ಲಿ ಒಬ್ಬನಾದ ದಿದುಮ ಎಂಬ ತೋಮನು, ಯೇಸು ಸ್ವಾಮಿ ಬಂದಾಗ ಶಿಷ್ಯರೊಡನೆ ಇರಲಿಲ್ಲ.</verse>
				<verse number="25">ಉಳಿದ ಶಿಷ್ಯರು, “ನಾವು ಪ್ರಭುವನ್ನು ನೋಡಿದೆವು,” ಎಂದು ಹೇಳಿದರು. ಅದಕ್ಕೆ ಅವನು, “ಅವರ ಕೈಗಳಲ್ಲಿ ಮೊಳೆಗಳಿಂದಾದ ಗಾಯದ ಕಲೆಯನ್ನು ನಾನು ನೋಡಬೇಕು. ಮೊಳೆಗಳು ಜಡಿದಿದ್ದ ಜಾಗದಲ್ಲಿ ನನ್ನ ಬೆರಳನ್ನಿಡಬೇಕು, ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟು ನೋಡಬೇಕು. ಆ ಹೊರತು ನಾನು ನಂಬುವುದೇ ಇಲ್ಲ,” ಎಂದುಬಿಟ್ಟನು.</verse>
				<verse number="26">ಎಂಟು ದಿನಗಳು ಕಳೆದವು. ಶಿಷ್ಯರು ಪುನಃ ಒಳಗೆ ಒಟ್ಟುಗೂಡಿದ್ದರು. ತೋಮನೂ ಅವರೊಡನೆ ಇದ್ದನು. ಬಾಗಿಲುಗಳು ಮುಚ್ಚಿದ್ದರೂ ಯೇಸು ಬಂದು ಅವರ ನಡುವೆ ನಿಂತು, “ನಿಮಗೆ ಶಾಂತಿ” ಎಂದರು.</verse>
				<verse number="27">ಆಮೇಲೆ ತೋಮನಿಗೆ, “ಇಗೋ ನೋಡು, ನನ್ನ ಕೈಗಳು; ನಿನ್ನ ಬೆರಳನ್ನು ತಂದು ಇಲ್ಲಿಡು. ನಿನ್ನ ಕೈಯನ್ನು ಚಾಚಿ ನನ್ನ ಪಕ್ಕೆಯಲ್ಲಿಡು. ವಿಶ್ವಾಸರಹಿತನಾಗಿರಬೇಡ, ವಿಶ್ವಾಸಿಸು,” ಎಂದು ಹೇಳಿದರು.</verse>
				<verse number="28">ಆಗ ತೋಮನು, “ನನ್ನ ಪ್ರಭುವೇ, ನನ್ನ ದೇವರೇ,” ಎಂದನು.</verse>
				<verse number="29">ಯೇಸು ಅವನಿಗೆ, “ನನ್ನನ್ನು ಕಂಡುದರಿಂದ ತಾನೆ ನಿನಗೆ ವಿಶ್ವಾಸ ಹುಟ್ಟಿತು? ಕಾಣದೆ ವಿಶ್ವಾಸಿಸುವವರು ಧನ್ಯರು,” ಎಂದು ಹೇಳಿದರು.</verse>
				<verse number="30">ಯೇಸು ತಮ್ಮ ಶಿಷ್ಯರ ಕಣ್ಮುಂದೆ ಮಾಡಿದ ಸೂಚಕಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನ್ನು ಈ ಪುಸ್ತಕದಲ್ಲಿ ಬರೆದಿಲ್ಲ.</verse>
				<verse number="31">ಇಲ್ಲಿ ಬರೆದವುಗಳ ಉದ್ದೇಶ ಇಷ್ಟೇ; ಯೇಸು, ದೇವರಪುತ್ರ ಹಾಗು ಲೋಕೋದ್ಧಾರಕ ಎಂದು ನೀವು ವಿಶ್ವಾಸಿಸಬೇಕು; ವಿಶ್ವಾಸಿಸಿ ಅವರ ಹೆಸರಿನಲ್ಲಿ ಸಜ್ಜೀವವನ್ನು ಪಡೆಯಬೇಕು.</verse>
			</chapter>
			<chapter number="21">
				<verse number="1">ತರುವಾಯ ಯೇಸು ಸ್ವಾಮಿ ತಮ್ಮ ಶಿಷ್ಯರಿಗೆ ಮತ್ತೊಮ್ಮೆ ತಿಬೇರಿಯ ಸರೋವರದ ಬಳಿ ಕಾಣಿಸಿಕೊಂಡರು. ಅದು ಹೀಗೆ ನಡೆಯಿತು:</verse>
				<verse number="2">ಸಿಮೋನ ಪೇತ್ರನು, ದಿದುಮನೆಂಬ ತೋಮನು, ಗಲಿಲೇಯದ ಕಾನಾ ಊರಿನ ನತಾನಯೇಲನು, ಜೆಬೆದಾಯನ ಪುತ್ರರು ಮತ್ತು ಯೇಸುವಿನ ಇನ್ನಿಬ್ಬರು ಶಿಷ್ಯರು ಒಟ್ಟಿಗೆ ಸೇರಿ ಇದ್ದರು.</verse>
				<verse number="3">ಆಗ ಸಿಮೋನ ಪೇತ್ರನು, “ನಾನು ಮೀನು ಹಿಡಿಯಲು ಹೋಗುತ್ತೇನೆ,” ಎಂದನು. ಮಿಕ್ಕವರು, “ನಾವೂ ನಿನ್ನೊಡನೆ ಬರುತ್ತೇವೆ,” ಎಂದರು. ಅವರೆಲ್ಲರೂ ಹೊರಟು ದೋಣಿಯನ್ನು ಹತ್ತಿದರು. ಆ ರಾತ್ರಿಯೆಲ್ಲಾ ಅವರಿಗೆ ಒಂದು ಮೀನೂ ಸಿಗಲಿಲ್ಲ.</verse>
				<verse number="4">ಬೆಳಗಾಗುವಷ್ಟರಲ್ಲಿ ಯೇಸು ತೀರದಲ್ಲಿ ನಿಂತಿದ್ದರು. ಆದರೆ ಅವರು ಯೇಸು ಎಂದು ಶಿಷ್ಯರಿಗೆ ಹೊಳೆಯಲಿಲ್ಲ.</verse>
				<verse number="5">ಯೇಸು ಅವರಿಗೆ, “ಮಕ್ಕಳೇ, ಊಟಕ್ಕೆ ಏನಾದರೂ ಸಿಕ್ಕಿತೇ?” ಎಂದು ಕೇಳಿದರು. “ಏನೂ ಇಲ್ಲ,” ಎಂದರು ಅವರು.</verse>
				<verse number="6">“ದೋಣಿಯ ಬಲಗಡೆಗೆ ಬಲೆ ಬೀಸಿರಿ; ಮೀನುಗಳು ಸಿಗುತ್ತವೆ,” ಎಂದು ಯೇಸು ಹೇಳಲು ಅವರು ಹಾಗೆಯೇ ಮಾಡಿದರು. ಆಗ ಮೀನುಗಳು ರಾಶಿರಾಶಿಯಾಗಿ ಸಿಕ್ಕಿದವು. ಬಲೆಯನ್ನು ಎಳೆಯಲೂ ಆಗದೆಹೋಯಿತು.</verse>
				<verse number="7">ಆಗ ಯೇಸುವಿನ ಆಪ್ತಶಿಷ್ಯನು ಪೇತ್ರನಿಗೆ, “ಅವರೇ ಪ್ರಭು” ಎಂದನು. ಪ್ರಭುವೆಂದು ಕೇಳಿದ್ದೇ ತಡ, ಬರೀ ಮೈಯಲ್ಲಿದ್ದ ಪೇತ್ರನು ಬಟ್ಟೆಯನ್ನು ಹಾಕಿಕೊಂಡು ನೀರಿಗೆ ಧುಮುಕಿದನು.</verse>
				<verse number="8">ಮಿಕ್ಕ ಶಿಷ್ಯರು ಮೀನು ತುಂಬಿದ್ದ ಬಲೆಯನ್ನು ಎಳೆಯುತ್ತಾ ಸುಮಾರು ಮುನ್ನೂರು ಅಡಿ ದೂರದಲ್ಲಿ ಇದ್ದ ದಡಕ್ಕೆ ದೋಣಿಯಲ್ಲೇ ಬಂದರು.</verse>
				<verse number="9">ಅವರು ದಡವನ್ನು ಸೇರಿದಾಗ ಅಲ್ಲಿ ಇದ್ದಲಿನ ಬೆಂಕಿ ಮಾಡಲಾಗಿತ್ತು. ಕೆಂಡದ ಮೇಲೆ ಮೀನುಗಳಿದ್ದವು. ರೊಟ್ಟಿಯೂ ಅಲ್ಲಿತ್ತು.</verse>
				<verse number="10">ಯೇಸು ಅವರಿಗೆ, “ನೀವು ಈಗ ತಾನೇ ಹಿಡಿದ ಮೀನುಗಳಲ್ಲಿ ಕೆಲವನ್ನು ತನ್ನಿ,” ಎಂದು ಹೇಳಿದರು.</verse>
				<verse number="11">ಸಿಮೋನ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳೆದುತಂದನು. ಬಲೆಯ ತುಂಬ ದೊಡ್ಡಮೀನುಗಳು - ಒಟ್ಟಿಗೆ ನೂರೈವತ್ತಮೂರು ಇದ್ದವು. ಅಷ್ಟು ಮೀನುಗಳಿದ್ದರೂ ಬಲೆಯು ಹರಿದಿರಲಿಲ್ಲ.</verse>
				<verse number="12">ಯೇಸು ಅವರಿಗೆ, “ಬಂದು ಊಟಮಾಡಿ,” ಎಂದು ಅವರನ್ನು ಕರೆದರು. ಅವರು ಪ್ರಭುವೆಂದು ಅರಿತಿದ್ದ ಕಾರಣ ಶಿಷ್ಯರಲ್ಲಿ ಒಬ್ಬನಿಗಾದರೂ, “ನೀವು ಯಾರು?” ಎಂದು ಕೇಳುವಷ್ಟು ಧೈರ್ಯ ಇರಲಿಲ್ಲ.</verse>
				<verse number="13">ಯೇಸುಹತ್ತಿರಕ್ಕೆ ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟರು, ಹಾಗೆಯೇ ಮೀನನ್ನೂ ಕೊಟ್ಟರು.</verse>
				<verse number="14">ಯೇಸು ಸತ್ತು ಜೀವಂತರಾಗಿ ಎದ್ದ ಬಳಿಕ ತಮ್ಮ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ.</verse>
				<verse number="15">ಅವರೆಲ್ಲರ ಊಟವಾದ ಮೇಲೆ ಯೇಸು ಸಿಮೋನ ಪೇತ್ರನನ್ನು ನೋಡಿ, ಯೊವಾನ್ನನ ಮಗನಾದ ಸಿಮೋನನೇ, ಇವರಿಗಿಂತಲೂ ಹೆಚ್ಚಾಗಿ ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. ಅದಕ್ಕೆ ಪೇತ್ರನು, “ಹೌದು ಪ್ರಭೂ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದನು. ಯೇಸು ಅವನಿಗೆ, “ನನ್ನ ಕುರಿಮರಿಗಳನ್ನು ಮೇಯಿಸು,” ಎಂದರು.</verse>
				<verse number="16">ಯೇಸು ಎರಡನೆಯ ಬಾರಿ, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಲು, “ಹೌದು ಪ್ರಭುವೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆಂದು ನೀವೇ ಬಲ್ಲಿರಿ,” ಎಂದು ಮರುನುಡಿದನು. ಯೇಸು ಅವನಿಗೆ, “ನನ್ನ ಕುರಿಗಳನ್ನು ಕಾಯಿ,” ಎಂದರು.</verse>
				<verse number="17">ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;</verse>
				<verse number="18">ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ, ಕೇಳು: ತಾರುಣ್ಯದಲ್ಲಿ ನೀನೇ ನಡುಕಟ್ಟಿಕೊಂಡು ಇಷ್ಟಬಂದ ಕಡೆ ನಡೆದೆ. ವೃದ್ಧಾಪ್ಯದಲ್ಲಾದರೋ ನೀನು ಕೈಚಾಚುವೆ. ಬೇರೊಬ್ಬನು ನಿನ್ನ ನಡುಕಟ್ಟಿ ನಿನಗಿಷ್ಟವಿಲ್ಲದ ಕಡೆ ನಿನ್ನನ್ನು ನಡೆಸಿಕೊಂಡು ಹೋಗುವನು,” ಎಂದು ನುಡಿದರು.</verse>
				<verse number="19">ಪೇತ್ರನು ಎಂಥ ಸಾವಿನಿಂದ ದೇವರ ಮಹಿಮೆಯನ್ನು ಬೆಳಗಿಸಲಿದ್ದಾನೆಂದು ಸೂಚಿಸಿ ಹಾಗೆ ಹೇಳಿದರು. ಇದಾದ ಮೇಲೆ ಯೇಸು ಪೇತ್ರನಿಗೆ, “ನೀನು ನನ್ನನ್ನು ಹಿಂಬಾಲಿಸಿ ಬಾ,” ಎಂದರು.</verse>
				<verse number="20">ಪೇತ್ರನು ಹಿಂದಿರುಗಿ ನೋಡಿದಾಗ, ಯೇಸುವಿನ ಆಪ್ತನಾಗಿದ್ದ ಶಿಷ್ಯನು ಹಿಂದೆ ಬರುವುದನ್ನು ಕಂಡನು. (ಭೋಜನದ ಸಮಯದಲ್ಲಿ ಯೇಸುವಿನ ಪಕ್ಕದಲ್ಲೇ ಒರಗಿ, “ಪ್ರಭುವೇ, ನಿಮ್ಮನ್ನು ಹಿಡಿದುಕೊಡುವಂಥ ಸ್ವಾಮಿ ದ್ರೋಹಿ ಯಾರು?” ಎಂದು ಕೇಳಿದವನೇ ಅವನು.)</verse>
				<verse number="21">ಇವನನ್ನು ಕಂಡು ಪೇತ್ರನು, “ಪ್ರಭೂ, ಇವನ ವಿಷಯವೇನು?” ಎಂದು ಯೇಸುವನ್ನು ಕೇಳಿದನು.</verse>
				<verse number="22">ಅದಕ್ಕೆ ಯೇಸು, “ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದು ನನ್ನ ಬಯಕೆ; ಆದರೆ ಅದರಿಂದ ನಿನಗೇನಾಗಬೇಕು? ನೀನು ಅಂತೂ ನನ್ನನ್ನು ಹಿಂಬಾಲಿಸಿ ಬಾ,” ಎಂದರು.</verse>
				<verse number="23">ಇದರಿಂದಾಗಿ ಆ ಶಿಷ್ಯನಿಗೆ ಸಾವಿಲ್ಲವೆಂಬ ವದಂತಿ ಸೋದರರಲ್ಲಿ ಹಬ್ಬಿತು. ಯೇಸು, ‘ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದು ನನ್ನ ಬಯಕೆಯಾದರೆ ಅದರಿಂದ ನಿನಗೇನಾಗಬೇಕು?’ ಎಂದು ಹೇಳಿದರೇ ಹೊರತು ಅವನಿಗೆ ಸಾವಿಲ್ಲವೆಂದು ಹೇಳಲಿಲ್ಲ.</verse>
				<verse number="24">ಇವುಗಳಿಗೆ ಆ ಶಿಷ್ಯನೇ ಸಾಕ್ಷಿ. ಇದನ್ನೆಲ್ಲಾ ಬರೆದಿಟ್ಟವನೂ ಅವನೇ. ಅವನ ಸಾಕ್ಷಿ ಸತ್ಯವಾದುದೆಂದು ನಾವು ಬಲ್ಲೆವು.</verse>
				<verse number="25">ಯೇಸು ಮಾಡಿದ ಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನ್ನೆಲ್ಲಾ ಒಂದೊಂದಾಗಿ ಬರೆಯಲು ಹೋದರೆ, ಬರೆಯಬೇಕಾದ ಗ್ರಂಥಗಳನ್ನು ಬಹುಶಃ ಲೋಕವೇ ಹಿಡಿಸಲಾರದೆಂದು ನೆನಸುತ್ತೇನೆ.</verse>
			</chapter>
		</book>
		<book number="44">
			<chapter number="1">
				<verse number="1">ಸನ್ಮಾನ್ಯ ಥೆಯೊಫಿಲನೇ, ಯೇಸುಸ್ವಾಮಿ ಸ್ವರ್ಗಕ್ಕೆ ಆರೋಹಣವಾದ ದಿನದವರೆಗೆ ಮಾಡಿದ ಕಾರ್ಯಗಳನ್ನೂ ನೀಡಿದ ಬೋಧನೆಗಳನ್ನೂ ಕುರಿತು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದಿದ್ದೇನೆ. ಸ್ವರ್ಗಾರೋಹಣಕ್ಕೆ ಮೊದಲು ಪ್ರೇಷಿತರನ್ನಾಗಿ ತಾವು ಆರಿಸಿಕೊಂಡಿದ್ದವರಿಗೆ ಪವಿತ್ರಾತ್ಮ ಅವರ ಮುಖಾಂತರ ಉಪದೇಶ ಮಾಡಿದರು.</verse>
				<verse number="2"></verse>
				<verse number="3">ತಮ್ಮ ಮರಣದ ನಂತರ ಅವರು ನಲವತ್ತು ದಿನಗಳವರೆಗೆ ಆ ಪ್ರೇಷಿತರಿಗೆ ಪ್ರತ್ಯಕ್ಷರಾದರು. ತಾವು ಜೀವಂತವಾಗಿರುವುದನ್ನು ವಿವಿಧ ರೀತಿಯಲ್ಲಿ ಸ್ಪಷ್ಟಪಡಿಸಿದರು. ದೇವರ ಸಾಮ್ರಾಜ್ಯವನ್ನು ಕುರಿತು ಅವರಿಗೆ ಬೋಧಿಸಿದರು.</verse>
				<verse number="4">ಒಮ್ಮೆ ಅವರೆಲ್ಲರೂ ಒಂದುಗೂಡಿದ್ದ ಸಂದರ್ಭದಲ್ಲಿ, “ನೀವು ಜೆರುಸಲೇಮನ್ನು ಬಿಟ್ಟು ಹೋಗಬೇಡಿ; ನಾನು ನಿಮಗೆ ತಿಳಿಸಿದಂತೆ ನನ್ನ ಪಿತನು ವಾಗ್ದಾನ ಮಾಡಿರುವ ವರಕ್ಕಾಗಿ ಕಾದುಕೊಂಡಿರಿ.</verse>
				<verse number="5">ಏಕೆಂದರೆ, ಯೊವಾನ್ನನು ನೀರಿನಿಂದ ಸ್ನಾನದೀಕ್ಷೆ ಕೊಡುತ್ತಿದ್ದನು; ಆದರೆ ಇನ್ನು ಕೆಲವೇ ದಿನಗಳಲ್ಲಿ ನೀವು ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನ ಪಡೆಯುವಿರಿ,” ಎಂದು ಆಜ್ಞಾಪಿಸಿದರು.</verse>
				<verse number="6">ಮತ್ತೊಮ್ಮೆ ಯೇಸುಸ್ವಾಮಿ ತಮ್ಮೊಡನೆ ಇದ್ದಾಗ ಪ್ರೇಷಿತರು, “ಪ್ರಭೂ, ನೀವು ಇದೀಗಲೇ ಇಸ್ರಯೇಲ್ ಜನರ ರಾಜ್ಯವನ್ನು ಪುನರ್‍ಸ್ಥಾಪಿಸುವಿರೋ?” ಎಂದು ಕೇಳಿದರು.</verse>
				<verse number="7">ಯೇಸು ಪ್ರತ್ಯುತ್ತರವಾಗಿ, “ಸಮಯ ಸಂದರ್ಭಗಳು ನನ್ನ ಪಿತನ ಸ್ವಾಧೀನದಲ್ಲಿವೆ. ಅವುಗಳನ್ನು ತಿಳಿಯುವುದು ನಿಮ್ಮ ಕೆಲಸವಲ್ಲ.</verse>
				<verse number="8">ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.</verse>
				<verse number="9">ಇದನ್ನು ಹೇಳಿದ ಮೇಲೆ ಪ್ರೇಷಿತರು ನೋಡುತ್ತಿದ್ದಂತೆಯೇ, ಯೇಸು ಸ್ವರ್ಗಾರೋಹಣವಾದರು. ಮೇಘವೊಂದು ಕವಿದು ಅವರನ್ನು ಕಣ್ಮರೆಮಾಡಿತು.</verse>
				<verse number="10">ಹೀಗೆ ಮೇಲೇರುತ್ತಿದ್ದ ಯೇಸುಸ್ವಾಮಿಯನ್ನು ನೋಡುತ್ತಿದ್ದ ಪ್ರೇಷಿತರ ದೃಷ್ಟಿ ಇನ್ನೂ ಆಕಾಶದತ್ತ ನಾಟಿತ್ತು. ಆಗ ಬಿಳಿಯ ವಸ್ತ್ರ ಧರಿಸಿದ್ದ ವ್ಯಕ್ತಿಗಳಿಬ್ಬರು ಇದ್ದಕ್ಕಿದ್ದಂತೆ ಅವರ ಪಕ್ಕದಲ್ಲಿ ನಿಂತರು.</verse>
				<verse number="11">“ಗಲಿಲೇಯದ ಜನರೇ, ನೀವು ಆಕಾಶವನ್ನು ದಿಟ್ಟಿಸಿ ನೋಡುತ್ತಾ ನಿಂತು ಇರುವುದೇಕೆ? ಸ್ವರ್ಗಾರೋಹಣರಾದ ಈ ಯೇಸು ನಿಮ್ಮ ಬಳಿಯಿಂದ ಹೇಗೆ ಸ್ವರ್ಗಕ್ಕೆ ಏರಿಹೋಗುವುದನ್ನು ಕಂಡಿರೋ ಹಾಗೆಯೇ ಅವರು ಹಿಂದಿರುಗಿ ಬರುವರು,” ಎಂದು ಹೇಳಿದರು.</verse>
				<verse number="12">ಅನಂತರ ಪ್ರೇಷಿತರು ಓಲಿವ್ ತೋಪಿನ ಗುಡ್ಡದಿಂದ ಸುಮಾರು ಒಂದು ಕಿಲೊಮೀಟರು ದೂರದಲ್ಲಿರುವ ಜೆರುಸಲೇಮಿಗೆ ಹಿಂದಿರುಗಿದರು.</verse>
				<verse number="13">ಅವರು ಯಾರಾರೆಂದರೆ: ಪೇತ್ರ, ಯೊವಾನ್ನ, ಯಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಕೋಬ, ದೇಶಾಭಿಮಾನಿ ಆದ ಸಿಮೋನ ಮತ್ತು ಯಕೋಬನ ಮಗ ಯೂದ. ಇವರೆಲ್ಲರು ಪಟ್ಟಣವನ್ನು ಸೇರಿದ್ದೇ, ಮೇಲ್ಮಾಳಿಗೆಯಲ್ಲಿದ್ದ ತಮ್ಮ ಕೊಠಡಿಗೆ ಹೋದರು.</verse>
				<verse number="14">ಅಲ್ಲಿ ಅವರು ಒಮ್ಮನಸ್ಸಿನಿಂದ ಪ್ರಾರ್ಥನೆಯಲ್ಲಿ ನಿರತರಾಗುತ್ತಿದ್ದರು. ಕೆಲವು ಮಹಿಳೆಯರೂ ಯೇಸುವಿನ ತಾಯಿ ಮರಿಯಳೂ ಯೇಸುವಿನ ಸಹೋದರರೂ ಅವರೊಡನೆ ಇದ್ದರು.</verse>
				<verse number="15">ಸ್ವಲ್ಪ ದಿನಗಳ ನಂತರ ಸುಮಾರು ನೂರ ಇಪ್ಪತ್ತು ಮಂದಿ ಭಕ್ತವಿಶ್ವಾಸಿಗಳು ಸಭೆ ಸೇರಿದ್ದರು. ಆಗ ಪೇತ್ರನು ಎದ್ದುನಿಂತು ಹೀಗೆಂದನು:</verse>
				<verse number="16">“ಪ್ರಿಯ ಸಹೋದರರೇ, ಯೇಸುವನ್ನು ಬಂಧಿಸಿದವರಿಗೆ ಮುಂದಾಳಾಗಿದ್ದವನು ಯೂದನು. ಅವನ ವಿಷಯವಾಗಿ ಪವಿತ್ರಾತ್ಮ ಅವರು ದಾವೀದನ ಮುಖಾಂತರ ಮುಂತಿಳಿಸಿದ ವಾಕ್ಯ ನೆರವೇರಲೇಬೇಕಾಗಿತ್ತು.</verse>
				<verse number="17">ಈ ಯೂದನು ನಮ್ಮಲ್ಲಿ ಒಬ್ಬನಾಗಿದ್ದವನು. ನಾವು ಕೈಗೊಂಡಿರುವ ಸೇವೆಯಲ್ಲಿ ಭಾಗಿಯಾಗಲು ಆಯ್ಕೆಯಾಗಿದ್ದವನು.</verse>
				<verse number="18">(\ಇವನು ತನ್ನ ನೀಚ ಕೃತ್ಯದಿಂದ ಪಡೆದ ಹಣದಿಂದ ಒಂದು ಹೊಲವನ್ನು ಕೊಂಡುಕೊಂಡ. ಆದರೆ ಅದರಲ್ಲೇ ಪ್ರಾಣ ಕಳೆದುಕೊಂಡ. ತಲೆಕೆಳಗಾಗಿ ಬಿದ್ದು, ಹೊಟ್ಟೆ ಬಿರಿದು, ಕರುಳೆಲ್ಲಾ ಹೊರಬಂದು ಸತ್ತುಹೋದ.</verse>
				<verse number="19">ಈ ವಿಷಯ ಜೆರುಸಲೇಮಿನ ನಿವಾಸಿಗಳಿಗೆಲ್ಲಾ ತಿಳಿಯಿತು. ಆ ಜಮೀನನ್ನು ತಮ್ಮ ಭಾಷೆಯಲ್ಲಿ ‘ಅಖೆಲ್ದಾಮ’ ಅಂದರೆ ‘ನೆತ್ತರನೆಲ’ ಎಂದು ಕರೆಯಲಾರಂಭಿಸಿದರು).</verse>
				<verse number="20">‘ಅವನ ಮನೆ ಹಾಳಾಗಲಿ, ಅದು ಪಾಳುಬೀಳಲಿ,’ ಎಂದೂ, ‘ಅವನ ಸ್ಥಾನ ಇನ್ನೊಬ್ಬನದಾಗಲಿ,’ ಎಂದೂ ಕೀರ್ತನಗ್ರಂಥದಲ್ಲಿ ಬರೆಯಲಾಗಿದೆ.</verse>
				<verse number="21">“ಆದುದರಿಂದ ಪ್ರಭುಯೇಸುವಿನ ಪುನರುತ್ಥಾನಕ್ಕೆ ನಮ್ಮೊಡನೆ ಸಾಕ್ಷಿಯಾಗಿರಲು ಒಬ್ಬನನ್ನು ನಾವು ಆರಿಸಬೇಕಾಗಿದೆ. ಅಂಥವನು ಯೇಸುವಿನ ಸೇವಾಸಂಚಾರದಲ್ಲೆಲ್ಲಾ ನಮ್ಮೊಡನೆ ಇದ್ದವನಾಗಿರಬೇಕು.</verse>
				<verse number="22">ಅಂದರೆ, ಸ್ನಾನಿಕ ಯೊವಾನ್ನನು ಸ್ನಾನದೀಕ್ಷೆಯನ್ನು ಕುರಿತು ಬೋಧಿಸಿದ ದಿನದಿಂದ ಯೇಸುವಿನ ಸ್ವರ್ಗಾರೋಹಣದ ದಿನದವರೆಗೂ ನಮ್ಮ ಸಂಗಡ ಇದ್ದವನಾಗಿರಬೇಕು.”</verse>
				<verse number="23">ಆಗ ಬಾರ್ನಬ ಎಂದು ಹೆಸರಿಸಲಾದ ಜೋಸೆಫ್ (ಇವನನ್ನು ಯುಸ್ತ ಎಂದೂ ಕರೆಯುತ್ತಿದ್ದರು) ಮತ್ತು ಮತ್ತೀಯ ಎಂಬ ಇಬ್ಬರ ಹೆಸರನ್ನು ಸೂಚಿಸಲಾಯಿತು.</verse>
				<verse number="24">ಅನಂತರ ಎಲ್ಲರೂ ಪ್ರಾರ್ಥನೆಮಾಡುತ್ತಾ, “ಸರ್ವೇಶ್ವರಾ, ನೀವು ಸರ್ವರ ಅಂತರಂಗಗಳನ್ನು ಅರಿತಿರುವಿರಿ. ಯೂದನು ತನ್ನ ಪ್ರೇಷಿತಸ್ಥಾನದಿಂದ ಭ್ರಷ್ಟನಾದ, ತನಗೆ ತಕ್ಕುದಾದ ಸ್ಥಳಕ್ಕೆ ತೆರಳಿದ. ಈ ಸೇವಾಸ್ಥಾನಕ್ಕೆ ಇವರಿಬ್ಬರಲ್ಲಿ ನೀವು ಆರಿಸಿದವನು ಯಾರೆಂದು ನಮಗೆ ತೋರಿಸಿರಿ,” ಎಂದರು.</verse>
				<verse number="25"></verse>
				<verse number="26">ಅನಂತರ ಚೀಟುಹಾಕಿದರು. ಅದು ಮತ್ತೀಯನ ಪರವಾಗಿತ್ತು. ಅವನನ್ನು ಹನ್ನೊಂದು ಮಂದಿಯೊಡನೆ ಪ್ರೇಷಿತಸ್ಥಾನಕ್ಕೆ ಸೇರಿಸಿಕೊಳ್ಳಲಾಯಿತು.</verse>
			</chapter>
			<chapter number="2">
				<verse number="1">ಪಂಚಾಶತ್ತಮ ಹಬ್ಬದ ದಿನ ಭಕ್ತವಿಶ್ವಾಸಿಗಳೆಲ್ಲರೂ ಒಂದು ಸ್ಥಳದಲ್ಲಿ ಸಭೆಸೇರಿದ್ದರು.</verse>
				<verse number="2">ಫಕ್ಕನೆ ಬಲವಾದ ಬಿರುಗಾಳಿ ಬೀಸುತ್ತಿದೆಯೋ ಎಂಬಂತೆ ಶಬ್ದವೊಂದು ಆಕಾಶದಿಂದ ಕೇಳಿಬಂತು. ಅದು ಅವರು ಕುಳಿತಿದ್ದ ಮನೆಯಲ್ಲೆಲ್ಲಾ ಮಾರ್ದನಿಸಿತು.</verse>
				<verse number="3">ಅಲ್ಲದೆ ಅಗ್ನಿಜ್ವಾಲೆಗಳು ಕೆನ್ನಾಲಿಗೆಯಂತೆ ಕಾಣಿಸಿಕೊಂಡವು. ಅವು ವಿಂಗಡ ವಿಂಗಡವಾಗಿ ಪ್ರತಿಯೊಬ್ಬರ ಮೇಲೂ ನೆಲೆಸಿದವು.</verse>
				<verse number="4">ಅವರೆಲ್ಲರೂ ಪವಿತ್ರಾತ್ಮಭರಿತರಾದರು. ಆ ಆತ್ಮಪ್ರೇರಣೆಯಿಂದ ಬೇರೆ ಬೇರೆ ಭಾಷೆಗಳಲ್ಲಿ ಮಾತನಾಡತೊಡಗಿದರು.</verse>
				<verse number="5">ಅದೇ ಸಮಯದಲ್ಲಿ ವಿಶ್ವದ ಎಲ್ಲಾ ದೇಶಗಳಿಂದ ಧರ್ಮನಿಷ್ಠ ಯೆಹೂದ್ಯರು ಜೆರುಸಲೇಮಿಗೆ ಬಂದು ತಂಗಿದರು.</verse>
				<verse number="6">ಆ ಶಬ್ದವನ್ನು ಕೇಳಿದ್ದೇ, ಜನರ ದೊಡ್ಡ ಗುಂಪು ಸೇರಿತು. ಭಕ್ತಾದಿಗಳು ಮಾತನಾಡುತ್ತಿದ್ದುದನ್ನು ತಮ್ಮ ತಮ್ಮ ಭಾಷೆಗಳಲ್ಲೇ ಕೇಳಿದ ಜನರು ದಿಗ್ಭ್ರಮೆಗೊಂಡರು.</verse>
				<verse number="7">ಅವರೆಲ್ಲರೂ ವಿಸ್ಮಿತರಾಗಿ, “ಹೀಗೆ ಮಾತನಾಡುವ ಇವರೆಲ್ಲಾ ಗಲಿಲೇಯದವರಲ್ಲವೇ?</verse>
				<verse number="8">ನಮ್ಮಲ್ಲಿ ಪ್ರತಿಯೊಬ್ಬನೂ ಇವರು ಮಾತನಾಡುತ್ತಿರುವುದನ್ನು ತನ್ನ ತನ್ನ ಮಾತೃಭಾಷೆಯಲ್ಲೇ ಕೇಳುತ್ತಿರುವುದು ಹೇಗೆ?</verse>
				<verse number="9">ನಮ್ಮಲ್ಲಿ ಪಾರ್ಥಿಯರು, ಮೀಡಿಯರು ಮತ್ತು ಎಲಾಮಿನವರೂ, ಮೆಸಪೊಟೇಮಿಯ, ಜುದೇಯ ಮತ್ತು ಕಪ್ಪದೋಸಿಯದವರೂ ಇದ್ದಾರೆ. ಪೊಂತ ಮತ್ತು ಏಷ್ಯ ದವರೂ,</verse>
				<verse number="10">ಫ್ರಿಜಿಯ ಮತ್ತು ಪಾಂಫಿಲಿಯದವರೂ ಇದ್ದಾರೆ. ಈಜಿಪ್ಟ್ ಮತ್ತು ಸಿರೇನಿನ ಬಳಿಯಲ್ಲಿರುವ ಲಿಬಿಯ ಪ್ರಾಂತ್ಯದವರೂ ಸೇರಿದ್ದಾರೆ. ಅದಲ್ಲದೆ ನಮ್ಮಲ್ಲಿ ಕೆಲವರು ರೋಮ್‍ನಿಂದ ಬಂದಿದ್ದಾರೆ.</verse>
				<verse number="11">ಯೆಹೂದ್ಯರೂ ಯೆಹೂದ್ಯ ಧರ್ಮಾವಲಂಬಿಗಳೂ ಆದ ಅನ್ಯರೂ, ಕ್ರೇಟ್ ಮತ್ತು ಅರೇಬಿಯದವರೂ ಇಲ್ಲಿದ್ದಾರೆ. ದೇವರ ಮಹತ್ಕಾರ್ಯಗಳನ್ನು ಕುರಿತು ಇವರು ಮಾತನಾಡುತ್ತಿರುವುದನ್ನು ನಾವೆಲ್ಲರೂ ನಮ್ಮ ನಮ್ಮ ಭಾಷೆಗಳಲ್ಲೇ ಕೇಳುತ್ತಿದ್ದೇವಲ್ಲಾ!” ಎಂದು ಅಚ್ಚರಿಯನ್ನು ವ್ಯಕ್ತಪಡಿಸಿದರು.</verse>
				<verse number="12">ಸರ್ವರೂ ಭ್ರಮೆಗೊಂಡು, ಇದರ ಅರ್ಥವಾದರೂ ಏನೆಂದು ಒಬ್ಬರನ್ನು ಒಬ್ಬರು ವಿಸ್ಮಯದಿಂದ ವಿಚಾರಿಸತೊಡಗಿದರು.</verse>
				<verse number="13">ಕೆಲವರಾದರೋ, “ಇವರು ಕುಡಿದು ಮತ್ತರಾಗಿದ್ದಾರೆ,” ಎಂದು ಪರಿಹಾಸ್ಯ ಮಾಡಿದರು.</verse>
				<verse number="14">ಆಗ ಪೇತ್ರನು ಇತರ ಹನ್ನೊಂದು ಮಂದಿ ಪ್ರೇಷಿತರೊಡನೆ ಎದ್ದುನಿಂತು, ಜನಸಮೂಹವನ್ನು ಉದ್ದೇಶಿಸಿ, ಗಟ್ಟಿಯಾದ ಧ್ವನಿಯಿಂದ ಹೀಗೆಂದು ಪ್ರಬೋಧಿಸಿದನು: “ಯೆಹೂದ್ಯ ಸ್ವಜನರೇ, ಜೆರುಸಲೇಮಿನ ಸಕಲ ನಿವಾಸಿಗಳೇ, ನನಗೆ ಕಿವಿಗೊಡಿ. ಈ ಘಟನೆಯ ಅರ್ಥ ನಿಮಗೆ ಮನದಟ್ಟಾಗಲಿ.</verse>
				<verse number="15">ನೀವು ಭಾವಿಸಿದಂತೆ ಈ ಜನರು ಕುಡಿದು ಮತ್ತರಾಗಿಲ್ಲ; ಈಗ ಇನ್ನೂ ಬೆಳಿಗ್ಗೆ ಒಂಬತ್ತು ಗಂಟೆ.</verse>
				<verse number="16">ಈ ಘಟನೆಯನ್ನು ಕುರಿತು ಪ್ರವಾದಿ ಯೋವೇಲ ಹೇಳಿರುವುದನ್ನು ಕೇಳಿ: ದೇವರು ಹೀಗೆನ್ನುತ್ತಾರೆ:</verse>
				<verse number="17">ಸುರಿಸುವೆನು ಸರ್ವರ ಮೇಲೂ ಎನ್ನಾತ್ಮವನು ಅಂತಿಮ ದಿನಗಳಲಿ; ಪ್ರವಾದಿಸುವರಾಗ ನಿಮ್ಮ ಕುವರ ಕುವರಿಯರು; ದಿವ್ಯದರ್ಶನ ಪಡೆವರು ನಿಮ್ಮ ಯುವಜನರು; ಕನಸುಕಾಣುವರು ನಿಮ್ಮ ವಯೋವೃದ್ಧರು.</verse>
				<verse number="18">ಸುರಿಸುವೆನು ಎನ್ನ ದಾಸದಾಸಿಯರ ಮೇಲೂ ಎನ್ನಾತ್ಮವನು ಆ ದಿನಗಳಲಿ, ಪ್ರವಾದಿಸುವರಾಗ, ಅವರು;</verse>
				<verse number="19">ಎಸಗುವೆನು ಆಗಸದಲಿ ಅದ್ಭುತಗಳನು, ಮಾಡುವೆನು ಭುವಿಯಲಿ ಮಹತ್ಕಾರ್ಯಗಳನು; ಕಾಣುವುದಾಗ ಕಿಚ್ಚು, ಕಪ್ಪೊಗೆ, ನೆತ್ತರು,</verse>
				<verse number="20">ರವಿ ಕಪ್ಪಾಗುವನು, ಶಶಿ ಕಡುಗೆಂಪಾಗುವನು, ಪ್ರಭುವಿನ ಮಹಿಮಾದಿನಕ್ಕೆ ಮುನ್ನ ಸಂಭವಿಸುವುವು ಇವೆಲ್ಲಾ.</verse>
				<verse number="21">ಪ್ರಭುವಿನ ನಾಮಸ್ಮರಣೆ ಮಾಡುವವರೆಲ್ಲ ಪಡೆಯುವರಾಗ ಜೀವೋದ್ಧಾರ.</verse>
				<verse number="22">“ಇಸ್ರಯೇಲ್‍ಬಾಂಧವರೇ, ನನ್ನ ಮಾತುಗಳನ್ನು ಆಲಿಸಿರಿ. ನಜರೇತಿನ ಯೇಸುಸ್ವಾಮಿ ದೈವನಿಯಮಿತ ವ್ಯಕ್ತಿ ಎಂಬುದನ್ನು ದೇವರೇ ಅವರ ಮುಖಾಂತರ ನಡೆಸಿದ ಅದ್ಭುತಕಾರ್ಯಗಳಿಂದ, ಮಹತ್ಕಾರ್ಯಗಳಿಂದ ಹಾಗೂ ಸೂಚಕಕಾರ್ಯಗಳಿಂದ ನಿಮಗೆ ಸ್ಪಷ್ಟಪಡಿಸಲಾಗಿದೆ. ಇದು ನಿಮಗೆ ತಿಳಿದಿರುವ ವಿಷಯ.</verse>
				<verse number="23">ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.</verse>
				<verse number="24">ಆದರೆ ದೇವರು ಅವರನ್ನು ಮೃತ್ಯುಶೂಲೆಯಿಂದ ಬಿಡಿಸಿ ಎಬ್ಬಿಸಿದರು. ಕಾರಣ - ಅವರನ್ನು ಬಂಧಿಸಿಡುವುದು ಮೃತ್ಯುವಿಗೆ ಅಸಾಧ್ಯವಾಗಿತ್ತು.</verse>
				<verse number="25">ಅವರನ್ನು ಕುರಿತು ದಾವೀದನು ಹೀಗೆಂದಿದ್ದಾನೆ: ‘ಪ್ರಭು ಇಹನು ಎನ್ನ ಕಣ್ಮುಂದೆ ಸತತ ನಾ ಹೆದರದಂತೆ ಆತನಿಹನು ಎನ್ನ ಹತ್ತಿರ.</verse>
				<verse number="26">ಇದಕಾರಣ ಹರ್ಷಿಸಿತು ಎನ್ನ ಹೃದಯ ತುಳುಕಿತು ಸಂತಸ ಎನ್ನ ನಾಲಗೆಯಿಂದ ನಂಬಿ ನಿರೀಕ್ಷೆಯಿಂದಿರುವುದು ಎನ್ನ ಮರ್ತ್ಯದೇಹ.</verse>
				<verse number="27">ಏಕೆನೆ, ದೂಡಲಾರೆ ಪಾತಾಳಕೆ ನೀನೆನ್ನ ಜೀವಾತ್ಮವನು, ಕೊಳೆಯಬಿಡಲಾರೆ ನೀನೊಲಿದಾತನನು.</verse>
				<verse number="28">ಅಮರ ಜೀವಮಾರ್ಗವನೆನಗೆ ತೋರ್ಪಡಿಸಿದೆ ನಿನ್ನ ಶ್ರೀಸಾನ್ನಿಧ್ಯ ಸಂತಸದಿಂದೆನ್ನ ಭರಿತನಾಗಿಸುವೆ.’</verse>
				<verse number="29">“ಪ್ರಿಯ ಸಹೋದರರೇ, ಪಿತಾಮಹ ದಾವೀದರಸನ ವಿಷಯದಲ್ಲಿ ನಾನು ನಿಮಗೆ ಸ್ಪಷ್ಟವಾಗಿ ಮಾತನಾಡಬೇಕಾಗಿದೆ. ಆತನು ಮೃತನಾದನು; ಆತನನ್ನು ಸಮಾಧಿಮಾಡಲಾಯಿತು. ನಿಮಗೆಲ್ಲರಿಗೆ ತಿಳಿದಿರುವಂತೆ ಆತನ ಸಮಾಧಿ ನಮ್ಮ ಮಧ್ಯೆ ಇಂದಿನವರೆಗೂ ಇದೆ.</verse>
				<verse number="30">ಆತನೊಬ್ಬ ಪ್ರವಾದಿಯೂ ಆಗಿದ್ದ. ತನ್ನ ಸಂತತಿಯಲ್ಲೇ ಒಬ್ಬನನ್ನು ಅರಸನನ್ನಾಗಿ ಮಾಡುವುದಾಗಿ ದೇವರು ಮಾಡಿದ್ದ ವಾಗ್ದಾನವನ್ನು ಆತನು ಮರೆತಿರಲಿಲ್ಲ.</verse>
				<verse number="31">ಹೀಗಿರುವಲ್ಲಿ ಕ್ರಿಸ್ತಯೇಸುವಿನ ಪುನರುತ್ಥಾನವನ್ನು ಮುಂಚಿತವಾಗಿ ಅರಿತು ಅದರ ವಿಷಯವಾಗಿ ಹೀಗೆಂದು ಪ್ರವಾದನೆ ಮಾಡಿದ: ಆತನನ್ನು ಪಾತಾಳಕ್ಕೆ ದೂಡಲಿಲ್ಲ; ದೇಹ ಕೊಳೆತುಹೋಗಲು ಬಿಡಲಿಲ್ಲ.’</verse>
				<verse number="32">ಈ ಯೇಸುವನ್ನೇ ದೇವರು ಪುನರುತ್ಥಾನಗೊಳಿಸಿದ್ದಾರೆ; ಈ ಘಟನೆಗೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ.</verse>
				<verse number="33">ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.</verse>
				<verse number="34">ಸ್ವರ್ಗಾರೋಹಣ ಆದವನು ದಾವೀದನಲ್ಲ; ಆದರೂ ಆತನು ಹೀಗೆಂದಿದ್ದಾನೆ: ನಿನ್ನ ಶತ್ರುಗಳನ್ನು ನಾನು ನಿನ್ನ ಪಾದಪೀಠವಾಗಿ ಮಾಡುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು ಎಂದು ನನ್ನ ‘ಪ್ರಭು’ವಿಗೆ ಸರ್ವೇಶ್ವರ ಹೇಳಿದ್ದಾರೆ.</verse>
				<verse number="35"></verse>
				<verse number="36">“ಇಸ್ರಯೇಲಿನ ಜನರೆಲ್ಲರಿಗೆ ಇದು ನಿಸ್ಸಂದೇಹವಾಗಿ ತಿಳಿದಿರಲಿ: ನೀವು ಶಿಲುಬೆಗೇರಿಸಿದ ಈ ಯೇಸುಸ್ವಾಮಿಯನ್ನೇ ದೇವರು ಪ್ರಭುವನ್ನಾಗಿಯೂ ಅಭಿಷಿಕ್ತ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ.”</verse>
				<verse number="37">ಇದನ್ನು ಕೇಳಿದ ಆ ಜನರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪ್ರೇಷಿತರನ್ನು ಉದ್ದೇಶಿಸಿ, “ಸಹೋದರರೇ, ಈಗ ನಾವು ಮಾಡಬೇಕಾದುದು ಏನು?” ಎಂದು ಕೇಳಿದರು.</verse>
				<verse number="38">ಅದಕ್ಕೆ ಪೇತ್ರನು, “ನಿಮ್ಮಲ್ಲಿ ಪ್ರತಿ ಒಬ್ಬನೂ ಪಶ್ಚಾತ್ತಾಪಪಟ್ಟು, ಪಾಪಕ್ಕೆ ವಿಮುಖನಾಗಿ ದೇವರಿಗೆ ಅಭಿಮುಖನಾಗಲಿ; ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆಯಲಿ. ಇದರಿಂದ ನೀವು ಪಾಪಕ್ಷಮೆಯನ್ನು ಪಡೆಯುವಿರಿ; ದೇವರ ವರವಾದ ಪವಿತ್ರಾತ್ಮರನ್ನು ಹೊಂದುವಿರಿ.</verse>
				<verse number="39">ಈ ವಾಗ್ದಾನವನ್ನು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಗೂ ದೂರ ಇರುವ ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ,” ಎಂದನು.</verse>
				<verse number="40">ಪೇತ್ರನು ಅವರಿಗೆ ಹಲವಾರು ವಿಧದಲ್ಲಿ ಮನವಿಮಾಡಿದನು. ‘ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿ,’ ಎಂದು ಎಚ್ಚರಿಸಿದನು.</verse>
				<verse number="41">ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು.</verse>
				<verse number="42">ಅಂದಿನಿಂದ ಅವರು ಪ್ರೇಷಿತರ ಬೋಧನೆಯನ್ನು ಕೇಳುವುದರಲ್ಲಿ ನಿರತರಾಗಿದ್ದರು; ಅನ್ಯೋನ್ಯವಾಗಿ ಬಾಳುತ್ತಿದ್ದರು; ರೊಟ್ಟಿ ಮುರಿಯುವ ಸಹಭೋಜನದಲ್ಲಿ ಪಾಲ್ಗೊಳ್ಳುತ್ತಿದ್ದರು ಹಾಗೂ ಪ್ರಾರ್ಥನಾಕೂಟಗಳಲ್ಲಿ ಭಾಗವಹಿಸುತ್ತಿದ್ದರು.</verse>
				<verse number="43">ಪ್ರೇಷಿತರ ಮುಖಾಂತರ ಅನೇಕ ಅದ್ಭುತಕಾರ್ಯಗಳೂ ಸೂಚಕಕಾರ್ಯಗಳೂ ನಡೆಯುತ್ತಿದ್ದವು. ಇವನ್ನು ಕಂಡು ಜನರು ಭಯಭ್ರಾಂತರಾಗುತ್ತಿದ್ದರು.</verse>
				<verse number="44">ಭಕ್ತವಿಶ್ವಾಸಿಗಳೆಲ್ಲರೂ ಅನ್ಯೋನ್ಯವಾಗಿ ಬಾಳುತ್ತಿದ್ದರು. ತಮ್ಮಲ್ಲಿದ್ದುದನ್ನು ಹುದುವಾಗಿ ಹಂಚಿಕೊಳ್ಳುತ್ತಿದ್ದರು.</verse>
				<verse number="45">ತಮ್ಮ ತಮ್ಮ ಆಸ್ತಿಪಾಸ್ತಿಯನ್ನು ಮಾರಿ ಬಂದ ಹಣವನ್ನು ಅವರವರ ಅವಶ್ಯಕತೆಗೆ ತಕ್ಕಂತೆ ಎಲ್ಲರಿಗೂ ಹಂಚುತ್ತಿದ್ದರು.</verse>
				<verse number="46">ದಿನಂಪ್ರತಿ ಅವರು ಒಮ್ಮನಸ್ಸಿನಿಂದ ದೇವಾಲಯದಲ್ಲಿ ಸಭೆ ಸೇರುತ್ತಿದ್ದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುವ ಸಹಭೋಜನವನ್ನು ಏರ್ಪಡಿಸಿ ಸಂತೋಷದಿಂದಲೂ ಸಹೃದಯದಿಂದಲೂ ಭಾಗವಹಿಸುತ್ತಿದ್ದರು.</verse>
				<verse number="47">ದೇವರನ್ನು ಸ್ತುತಿಸುತ್ತಾ ಸಕಲರಿಗೆ ಅಚ್ಚುಮೆಚ್ಚಾಗಿ ಬಾಳುತ್ತಿದ್ದರು. ಜೀವೋದ್ಧಾರವನ್ನು ಹೊಂದುತ್ತಿದ್ದವರನ್ನೆಲ್ಲಾ ಪ್ರಭು ಈ ಸಭೆಗೆ ದಿನೇದಿನೇ ಸೇರಿಸಿಕೊಳ್ಳುತ್ತಿದ್ದರು.</verse>
			</chapter>
			<chapter number="3">
				<verse number="1">ಒಂದು ದಿನ ಮಧ್ಯಾಹ್ನ ಮೂರು ಗಂಟೆಯ ಸಮಯ. ಅದು ಪ್ರಾರ್ಥನಾವೇಳೆ. ಪೇತ್ರ ಮತ್ತು ಯೊವಾನ್ನ ಮಹಾದೇವಾಲಯಕ್ಕೆ ಹೋದರು.</verse>
				<verse number="2">‘ಸುಂದರದ್ವಾರ’ ಎಂದು ಕರೆಯಲಾದ ಬಾಗಿಲ ಬಳಿ ಹುಟ್ಟುಕುಂಟನೊಬ್ಬ ಇದ್ದನು. ಅವನನ್ನು ಪ್ರತಿದಿನ ಹೊತ್ತುತಂದು ಈ ದ್ವಾರದ ಬಳಿ ಬಿಡಲಾಗುತ್ತಿತ್ತು. ಅವನು ದೇವಾಲಯಕ್ಕೆ ಬರುತ್ತಿದ್ದ ಜನರಿಂದ ಭಿಕ್ಷೆಬೇಡುತ್ತಿದ್ದನು.</verse>
				<verse number="3">ಪೇತ್ರ ಮತ್ತು ಯೊವಾನ್ನ ದೇವಾಲಯದೊಳಗೆ ಹೋಗುತ್ತಿರುವುದನ್ನು ಅವನು ಕಂಡನು. ತನಗೆ ಏನಾದರೂ ಭಿಕ್ಷೆ ಕೊಡಬೇಕೆಂದು ಬೇಡಿದನು.</verse>
				<verse number="4">ಅವರು ಕುಂಟನನ್ನು ತದೇಕ ದೃಷ್ಟಿಯಿಂದ ಈಕ್ಷಿಸಿದರು. ಪೇತ್ರನು,. “ಎಲ್ಲಿ, ನಮ್ಮನ್ನು ನೋಡು,” ಎಂದನು.</verse>
				<verse number="5">ಕುಂಟನು ಅವರಿಂದ ಭಿಕ್ಷೆಯನ್ನು ಅಪೇಕ್ಷಿಸುತ್ತಾ ಅವರನ್ನೇ ನೋಡಿದನು.</verse>
				<verse number="6">ಆದರೆ ಪೇತ್ರನು, “ಹಣಕಾಸೇನೂ ನನ್ನಲ್ಲಿಲ್ಲ, ನನ್ನಲ್ಲಿ ಇರುವುದನ್ನು ನಿನಗೆ ಕೊಡುತ್ತೇನೆ; ನಜರೇತಿನ ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಆಜ್ಞಾಪಿಸುತ್ತೇನೆ, ಎದ್ದು ನಡೆ” ಎನ್ನುತ್ತಾ.</verse>
				<verse number="7">ಅವನ ಬಲಗೈಯನ್ನು ಹಿಡಿದು ನಿಲ್ಲಲು ಸಹಾಯಮಾಡಿದನು. ಆ ಕ್ಷಣವೇ ಕುಂಟನ ಅಂಗಾಲು ಮುಂಗಾಲುಗಳು ಬಲಗೊಂಡವು.</verse>
				<verse number="8">ಅವನು ಜಿಗಿದುನಿಂತು ಅತ್ತಿತ್ತ ನಡೆದಾಡಲು ಪ್ರಾರಂಭಿಸಿದನು. ಅನಂತರ ಅವನು ಕುಣಿಯುತ್ತಾ ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಅವರೊಡನೆಯೇ ದೇವಾಲಯದೊಳಗೆ ಹೋದನು.</verse>
				<verse number="9">ಅವನು ಹೀಗೆ ನಡೆಯುವುದನ್ನೂ ದೇವರನ್ನು ಕೊಂಡಾಡುವುದನ್ನೂ ಜನಸಮೂಹ ನೋಡಿತು.</verse>
				<verse number="10">ದೇವಾಲಯದ ಸುಂದರದ್ವಾರದ ಬಳಿ ಕುಳಿತು ಭಿಕ್ಷೆಬೇಡುತ್ತಿದ್ದವನು ಇವನೇ ಎಂದು ಜನರು ಗುರುತು ಹಚ್ಚಿದರು. ಅವನಿಗೆ ಸಂಭವಿಸಿದ್ದನ್ನು ಕಂಡು ಬೆಕ್ಕಸಬೆರಗಾದರು.</verse>
				<verse number="11">‘ಸೊಲೊಮೋನನ ಮಂಟಪ’ದಲ್ಲಿ ಪೇತ್ರ ಮತ್ತು ಯೊವಾನ್ನರ ಜೊತೆ ಆ ಭಿಕ್ಷುಕನು ಇನ್ನೂ ನಿಂತಿದ್ದನು. ಆಶ್ಚರ್ಯಭರಿತರಾದ ಜನರು ಅಲ್ಲಿಗೆ ಓಡಿಬಂದರು.</verse>
				<verse number="12">ಇದನ್ನು ನೋಡಿ ಪೇತ್ರನು ಇಂತೆಂದನು: “ಇಸ್ರಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮನ್ನೇಕೆ ಎವೆಯಿಕ್ಕದೆ ನೋಡುತ್ತಿದ್ದೀರಿ? ನಮ್ಮ ಸ್ವಂತ ಶಕ್ತಿಯಿಂದಾಗಲೀ ಭಕ್ತಿಯಿಂದಾಗಲೀ, ಈ ಮನುಷ್ಯನು ನಡೆಯುವಂತೆ ನಾವು ಮಾಡಿದೆವೆಂದು ಭಾವಿಸುತ್ತೀರೋ?</verse>
				<verse number="13">ಪಿತಾಮಹ ಅಬ್ರಹಾಮ, ಇಸಾಕ ಮತ್ತು ಯಕೋಬರ ದೇವರು, ಅಂದರೆ ನಮ್ಮ ಪೂರ್ವಜರ ದೇವರು, ತಮ್ಮ ದಾಸ ಯೇಸುವಿನ ಮಹಿಮೆಯನ್ನು ಬೆಳಗಿಸಿದ್ದಾರೆ. ನೀವಾದರೋ ಅವರನ್ನು ಅಧಿಕಾರಿಗಳ ಕೈಗೊಪ್ಪಿಸಿದಿರಿ. ರಾಜ್ಯಪಾಲ ಪಿಲಾತನು ಅವರನ್ನು ಬಿಡುಗಡೆಮಾಡಲು ನಿರ್ಧರಿಸಿದಾಗ ಕೂಡ ಅವನ ಸಮ್ಮುಖದಲ್ಲೇ ಅವರನ್ನು ಧಿಕ್ಕರಿಸಿದಿರಿ.</verse>
				<verse number="14">ಯೇಸು ಪುನೀತರು ಹಾಗೂ ಸತ್ಯಸ್ವರೂಪರು. ಆದರೂ ನೀವು ಅವರನ್ನು ನಿರಾಕರಿಸಿ, ಒಬ್ಬ ಕೊಲೆಗಡುಕನನ್ನೇ ನಿಮಗೆ ಬಿಟ್ಟುಕೊಡುವಂತೆ ಪಿಲಾತನನ್ನು ಬೇಡಿಕೊಂಡಿರಿ.</verse>
				<verse number="15">ಜೀವದೊಡೆಯನನ್ನು ನೀವು ಕೊಂದುಹಾಕಿದಿರಿ; ದೇವರು ಅವರನ್ನು ಪುನರುತ್ಥಾನಗೊಳಿಸಿದರು. ಇದಕ್ಕೆ ನಾವೇ ಸಾಕ್ಷಿಗಳು.</verse>
				<verse number="16">ನಿಮ್ಮ ಕಣ್ಣೆದುರಿಗಿರುವ ಈ ಮನುಷ್ಯನು ಯಾರೆಂದು ನಿಮಗೆ ಗೊತ್ತಿದೆ. ಯೇಸುವಿನ ನಾಮದಿಂದಲೇ, ಆ ನಾಮದ ಮೇಲಿಟ್ಟ ವಿಶ್ವಾಸದಿಂದಲೇ, ಈತನು ಶಕ್ತಿಪಡೆದಿದ್ದಾನೆ. ಯೇಸುವಿನಲ್ಲಿಟ್ಟ ಆ ವಿಶ್ವಾಸವೇ ಈತನಿಗೆ, ನೀವೇ ನೋಡುವಂತೆ, ಸಂಪೂರ್ಣ ಆರೋಗ್ಯವನ್ನು ದಯಪಾಲಿಸಿದೆ.</verse>
				<verse number="17">“ಸಹೋದರರೇ, ನೀವೂ ನಿಮ್ಮ ಅಧಿಕಾರಿಗಳೂ ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನಾನು ಬಲ್ಲೆ.</verse>
				<verse number="18">ಕ್ರಿಸ್ತಯೇಸು ಯಾತನೆಯನ್ನು ಅನುಭವಿಸಬೇಕೆಂದು ದೇವರು ಪ್ರವಾದಿಗಳೆಲ್ಲರ ಮುಖಾಂತರ ಆಗಲೇ ಮುಂತಿಳಿಸಿದ್ದರು. ಆ ಪ್ರವಾದನೆಗಳನ್ನು ಈಗ ನೆರವೇರಿಸಿದ್ದಾರೆ.</verse>
				<verse number="19">ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.</verse>
				<verse number="20">ಸರ್ವೇಶ್ವರನ ಸಾನ್ನಿಧ್ಯ ಸೌಭಾಗ್ಯವು ನಿಮ್ಮದಾಗುವುದು; ನಿಮಗೋಸ್ಕರ ನೇಮಿತರಾದ ಉದ್ಧಾರಕ ಯೇಸುವನ್ನು ಕಳುಹಿಸುವರು.</verse>
				<verse number="21">ಸಮಸ್ತವನ್ನೂ ಪುನರ್‍ಸ್ಥಾಪನೆಗೊಳಿಸುವವರೆಗೆ ಕ್ರಿಸ್ತಯೇಸು ಸ್ವರ್ಗದಲ್ಲಿಯೇ ಇರಬೇಕಾಗಿದೆ. ಇದನ್ನು ದೇವರು ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲಕ್ಕೆ ಹಿಂದೆಯೇ ಪ್ರಕಟಿಸಿದ್ದಾರೆ.</verse>
				<verse number="22">‘ಸರ್ವೇಶ್ವರನಾದ ದೇವರು ನನ್ನನ್ನು ಕಳುಹಿಸಿದಂತೆಯೇ ನಿಮಗೊಬ್ಬ ಪ್ರವಾದಿಯನ್ನು ಕಳುಹಿಸುವರು. ಆತನು ನಿಮ್ಮ ಸ್ವಂತ ಜನಾಂಗದವನಾಗಿರುವನು. ಆತನು ಹೇಳುವುದನ್ನೆಲ್ಲಾ ನೀವು ಕೇಳಬೇಕು.</verse>
				<verse number="23">ಆ ಪ್ರವಾದಿಗೆ ಕಿವಿಗೊಡದವನು ದೇವಜನರಿಂದ ದೂರವಾಗಿ ನಾಶವಾಗುತ್ತಾನೆ,’ ಎಂದು ಮೋಶೆ ಹೇಳಿದ್ದಾನೆ.</verse>
				<verse number="24">ಸಮುವೇಲನೂ ಅವನ ನಂತರ ಬಂದ ಎಲ್ಲ ಪ್ರವಾದಿಗಳೂ ಈ ದಿನಗಳಲ್ಲಿ ನಡೆಯುತ್ತಿರುವುದನ್ನು ದೈವದತ್ತವಾಗಿ ಸಾರಿದ್ದಾರೆ.</verse>
				<verse number="25">ದೇವರು ಪ್ರವಾದಿಗಳ ಮುಖಾಂತರ ಮಾಡಿದ ವಾಗ್ದಾನಗಳಿಗೂ ನಿಮ್ಮ ಪೂರ್ವಜರೊಂದಿಗೆ ಮಾಡಿದ ಒಡಂಬಡಿಕೆಗೂ ನೀವು ಉತ್ತರಾಧಿಕಾರಿಗಳು; ಪೂರ್ವಜ ಅಬ್ರಹಾಮನಿಗೆ, ‘ನಿನ್ನ ಸಂತತಿಯ ಮುಖಾಂತರ ವಿಶ್ವದ ಎಲ್ಲಾ ಜನಾಂಗಗಳು ಧನ್ಯರಾಗುವರು’ ಎಂದಿದ್ದಾರೆ ದೇವರು.</verse>
				<verse number="26">ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.”</verse>
			</chapter>
			<chapter number="4">
				<verse number="1">ಪೇತ್ರ ಮತ್ತು ಯೊವಾನ್ನ ಜನರನ್ನು ಉದ್ದೇಶಿಸಿ ಇನ್ನೂ ಮಾತನಾಡುತ್ತಿದ್ದರು. ಆಗ ಯಾಜಕರೂ ಮಹಾದೇವಾಲಯದ ದಳಪತಿಗಳೂ ಸದ್ದುಕಾಯರೂ ಅಲ್ಲಿಗೆ ಬಂದರು.</verse>
				<verse number="2">ಯೇಸುವಿನ ಪುನರುತ್ಥಾನದ ಆಧಾರದ ಮೇಲೆ ಮೃತರಾದ ಎಲ್ಲರೂ ಪುನರುತ್ಥಾನ ಹೊಂದುವರು ಎಂದು ಈ ಇಬ್ಬರು ಪ್ರೇಷಿತರು ಬೋಧಿಸುತ್ತಿದ್ದರು.</verse>
				<verse number="3">ಇದನ್ನು ಕೇಳಿ ಸಿಟ್ಟುಗೊಂಡಿದ್ದ ಅವರು ಪೇತ್ರ ಯೊವಾನ್ನರನ್ನು ಬಂಧಿಸಿದರು. ಆಗಲೇ ಹೊತ್ತು ಮೀರಿದ್ದರಿಂದ ಮಾರನೆಯ ದಿನದವರೆಗೆ ಅವರನ್ನು ಸೆರೆಮನೆಯಲ್ಲಿಟ್ಟರು.</verse>
				<verse number="4">ಆದರೆ ಪ್ರೇಷಿತರ ಬೋಧನೆಯನ್ನು ಕೇಳಿದ ಅನೇಕರು ವಿಶ್ವಾಸಿಗಳಾದರು. ಭಕ್ತವಿಶ್ವಾಸಿಗಳ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.</verse>
				<verse number="5">ಮಾರನೆಯ ದಿನ ಯೆಹೂದ್ಯ ಅಧಿಕಾರಿಗಳೂ ಪ್ರಮುಖರೂ ಧರ್ಮಶಾಸ್ತ್ರಿಗಳೂ ಜೆರುಸಲೇಮಿನಲ್ಲಿ ಸಭೆ ಸೇರಿದರು.</verse>
				<verse number="6">ಪ್ರಧಾನಯಾಜಕ ಅನ್ನಾ ಹಾಗೂ ಕಾಯಫ, ಯೊವಾನ್ನ, ಅಲೆಕ್ಸಾಂಡರ್ ಮತ್ತು ಪ್ರಧಾನಯಾಜಕನ ಕುಟುಂಬದವರು ಆ ಸಭೆಯಲ್ಲಿ ಹಾಜರಿದ್ದರು.</verse>
				<verse number="7">ಪ್ರೇಷಿತರನ್ನು ಸಭೆಯ ಮುಂದೆ ನಿಲ್ಲಿಸಿ, “ಇದೆಲ್ಲವನ್ನು ನೀವು ಯಾರ ಹೆಸರಿನಲ್ಲಿ ಮತ್ತು ಯಾವ ಅಧಿಕಾರದಿಂದ ಮಾಡಿದಿರಿ?” ಎಂದು ಪ್ರಶ್ನಿಸಿದರು.</verse>
				<verse number="8">ಪೇತ್ರನು ಪವಿತ್ರಾತ್ಮಭರಿತನಾಗಿ ಹೀಗೆಂದು ಉತ್ತರಕೊಟ್ಟನು: “ಜನರ ಅಧಿಕಾರಿಗಳೇ, ಪ್ರಮುಖರೇ,</verse>
				<verse number="9">ನಾವು ಒಬ್ಬ ಕುಂಟನಿಗೆ ಮಾಡಿದ ಸತ್ಕಾರ್ಯದ ಬಗ್ಗೆ, ಅವನು ಸ್ವಸ್ಥನಾದುದು ಹೇಗೆಂದು ನೀವು ನಮ್ಮನ್ನು ಇಂದು ಪ್ರಶ್ನಿಸುತ್ತಿರುವಿರಿ.</verse>
				<verse number="10">ನಿಮಗೂ ಇಸ್ರಯೇಲಿನ ಎಲ್ಲಾ ಜನರಿಗೂ ಈ ವಿಷಯ ತಿಳಿದಿರಲಿ; ನಜರೇತಿನ ಯೇಸುಕ್ರಿಸ್ತರ ನಾಮದ ಶಕ್ತಿಯಿಂದಲೇ ಈ ಮನುಷ್ಯನು ಪೂರ್ಣ ಗುಣಹೊಂದಿ ನಿಮ್ಮ ಮುಂದೆ ನಿಂತಿದ್ದಾನೆ.</verse>
				<verse number="11">ನೀವು ಶಿಲುಬೆಗೇರಿಸಿ ಕೊಂದದ್ದು ಈ ಯೇಸುವನ್ನೇ. ದೇವರು ಅವರನ್ನು ಪುನರುತ್ಥಾನಗೊಳಿಸಿದ್ದಾರೆ. ‘ಮನೆಕಟ್ಟುವವರಾದ ನೀವು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು’ ಎಂದು ಬರೆದಿರುವುದು ಇವರನ್ನು ಕುರಿತೇ.</verse>
				<verse number="12">ಇವರಿಂದಲ್ಲದೆ ಬೇರಾರಿಂದಲೂ ನಮಗೆ ಜೀವೋದ್ಧಾರವಿಲ್ಲ. ಇವರ ನಾಮವನ್ನು ಬಿಟ್ಟರೆ ಈ ಧರೆಯಲ್ಲಿರುವ ಬೇರೆ ಯಾವ ನಾಮದಿಂದಲೂ ನಾವು ಜೀವೋದ್ಧಾರ ಹೊಂದುವಂತಿಲ್ಲ.”</verse>
				<verse number="13">ಅವಿದ್ಯಾವಂತರು ಹಾಗೂ ಜನಸಾಮಾನ್ಯರು ಆಗಿದ್ದರೂ, ಇವರು ಇಷ್ಟು ಧೈರ್ಯಶಾಲಿಗಳಾಗಿರುವುದನ್ನು ಕಂಡು ಸಭೆಯ ಸದಸ್ಯರು ಚಕಿತರಾದರು; ಯೇಸುವಿನ ಸಂಗಡಿಗರೆಂದು ಇವರ ಗುರುತು ಹಚ್ಚಿದರು.</verse>
				<verse number="14">ಗುಣಹೊಂದಿದ್ದ ಆ ಮನುಷ್ಯನು ಪೇತ್ರ ಮತ್ತು ಯೊವಾನ್ನರ ಜೊತೆ ನಿಂತಿರುವುದನ್ನು ಕಂಡು ನಿರುತ್ತರರಾದರು.</verse>
				<verse number="15">ಸಭಾಕೂಟದಿಂದ ಪ್ರೇಷಿತರನ್ನು ಹೊರಗೆ ಕಳುಹಿಸಿ ತಮ್ಮೊಳಗೇ ಚರ್ಚಿಸಲಾರಂಭಿಸಿದರು;</verse>
				<verse number="16">“ಇವರನ್ನು ಏನು ಮಾಡೋಣ? ಇವರು ಮಾಡಿರುವ ಅಪರೂಪ ಅದ್ಭುತ ಜೆರುಸಲೇಮಿನ ಸರ್ವರಿಗೂ ತಿಳಿದುಹೋಗಿದೆ. ಅದನ್ನು ಅಲ್ಲಗಳೆಯುವಂತಿಲ್ಲ.</verse>
				<verse number="17">ಆದರೂ, ಈ ಸಮಾಚಾರ ಜನರಲ್ಲಿ ಮತ್ತಷ್ಟು ಹರಡದಂತೆ ಇನ್ನು ಮೇಲೆ ಯಾರ ಬಳಿಯಲ್ಲೂ ಯೇಸುವಿನ ಹೆಸರೆತ್ತದಂತೆ ಇವರಿಗೆ ಎಚ್ಚರಿಕೆ ಕೊಡೋಣ,” ಎಂದುಕೊಂಡರು.</verse>
				<verse number="18">ಅನಂತರ ಪ್ರೇಷಿತರನ್ನು ಒಳಕ್ಕೆ ಕರೆದು, “ಇನ್ನು ಮುಂದೆ ಯೇಸುವಿನ ಹೆಸರೆತ್ತಿ ಮಾತನಾಡಬಾರದು, ಬೋಧಿಸಕೂಡದು,” ಎಂದು ಕಟ್ಟಪ್ಪಣೆ ಮಾಡಿದರು.</verse>
				<verse number="19">ಆಗ ಪೇತ್ರ ಮತ್ತು ಯೊವಾನ್ನರು, “ನಾವು ದೇವರಿಗೆ ವಿಧೇಯರಾಗಬೇಕೋ? ನಿಮಗೆ ವಿಧೇಯರಾಗಬೇಕೋ? ದೇವರ ದೃಷ್ಟಿಯಲ್ಲಿ ಯಾವುದು ಸರಿ? ನೀವೇ ನಿರ್ಣಯಿಸಿರಿ.</verse>
				<verse number="20">ನಾವಂತೂ ಕಣ್ಣಾರೆ ಕಂಡು, ಕಿವಿಯಾರೆ ಕೇಳಿದ ವಿಷಯನ್ನು ಕುರಿತು ಮೌನದಿಂದಿರಲಾಗದು,” ಎಂದು ಬದಲು ನುಡಿದರು.</verse>
				<verse number="21">ನಡೆದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. ಇದನ್ನು ಅರಿತ ಆ ಸಭಾಸದಸ್ಯರಿಗೆ ಪ್ರೇಷಿತರನ್ನು ಶಿಕ್ಷಿಸುವ ಮಾರ್ಗ ತೋಚದೆಹೋಯಿತು. ಆದುದರಿಂದ ಅವರನ್ನು ಇನ್ನೂ ಅಧಿಕವಾಗಿ ಎಚ್ಚರಿಸಿ ಕಳುಹಿಸಿಬಿಟ್ಟರು.</verse>
				<verse number="22">ಈ ಅದ್ಭುತದಿಂದ ಗುಣಹೊಂದಿದ ಆ ವ್ಯಕ್ತಿಗೆ ನಲವತ್ತು ವರ್ಷ ಮೀರಿತ್ತು.</verse>
				<verse number="23">ಪೇತ್ರ ಮತ್ತು ಯೊವಾನ್ನ ಬಂಧನದಿಂದ ಬಿಡುಗಡೆ ಹೊಂದಿದ ಮೇಲೆ ವಿಶ್ವಾಸಿಗಳಿಗೆ ಭೇಟಿಯಿತ್ತರು. ಮುಖ್ಯಯಾಜಕರು ಹಾಗೂ ಪ್ರಜಾಪ್ರಮುಖರು ತಮಗೆ ಹೇಳಿದ್ದನ್ನು ಅವರಿಗೆ ವರದಿಮಾಡಿದರು.</verse>
				<verse number="24">ಈ ಸಮಾಚಾರವನ್ನು ಕೇಳಿದಕೂಡಲೇ ಭಕ್ತಾದಿಗಳು ಏಕಕಂಠದಿಂದ ದೇವರನ್ನು ಪ್ರಾರ್ಥಿಸುತ್ತಾ ಹೀಗೆಂದರು: “ಪ್ರಭುವೇ, ಇಹಪರಗಳನ್ನೂ ಸಮುದ್ರಸಾಗರಗಳನ್ನೂ ಅವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದವರು ನೀವೇ.</verse>
				<verse number="25">ಸರ್ವೇಶ್ವರನಿಗೂ ಆತ ಅಭಿಷೇಕಿಸಿದವನಿಗೂ ವಿರುದ್ಧ ‘ಅನ್ಯಧರ್ಮಿಯರೇಕೆ ರೋಷಭರಿತರಾದರು? ಜನರೇಕೆ ವ್ಯರ್ಥ ಒಳಸಂಚು ಹೂಡಿದರು? ಲೋಕಾಧಿಪತಿಗಳೇಕೆ ಸನ್ನದ್ಧರಾದರು? ಜನನಾಯಕರೇಕೆ ಸಮಾಲೋಚಿಸಿದರು?’ ಎಂದು ನಮ್ಮ ಪಿತಾಮಹ ಹಾಗೂ ನಿಮ್ಮ ದಾಸನಾದ ದಾವೀದನ ಬಾಯಿಂದ ನುಡಿಸಿದಿರಿ.</verse>
				<verse number="26"></verse>
				<verse number="27">“ಅಂತೆಯೇ, ನಿಮ್ಮ ಪರಮಪೂಜ್ಯದಾಸ ಯೇಸುವಿನ ವಿರುದ್ಧ ಹೆರೋದನು ಮತ್ತು ಪೊಂತ್ಸಿಯುಸ್ ಪಿಲಾತನು ಅನ್ಯಧರ್ಮದವರೊಡನೆ ಹಾಗೂ ಇಸ್ರಯೇಲಿನ ಜನರೊಡನೆ ಸೇರಿ ಈ ಪಟ್ಟಣದಲ್ಲೇ ಸಮಾಲೋಚನೆ ಮಾಡಿದರು.</verse>
				<verse number="28">ನೀವು ಸಂಯೋಜಿಸಿದ್ದು ಹಾಗೂ ಸಂಕಲ್ಪಿಸಿದ್ದು ಈಡೇರುವಂತೆ ಅವರು ಹೀಗೆ ವರ್ತಿಸಿದರು.</verse>
				<verse number="29">ಪ್ರಭುವೇ, ಇಗೋ, ಇವರು ನಮ್ಮನ್ನು ಬೆದರಿಸುತ್ತಿದ್ದಾರೆ; ನಿಮ್ಮ ಸಂದೇಶವನ್ನು ಧೈರ್ಯವಾಗಿ ಸಾರಲು ಶರಣರಾದ ನಮಗೆ ನೆರವು ನೀಡಿರಿ.</verse>
				<verse number="30">ಸ್ವಸ್ಥಪಡಿಸುವ ನಿಮ್ಮ ಅಮೃತಹಸ್ತವನ್ನು ಚಾಚಿರಿ; ನಿಮ್ಮ ಪರಮಪೂಜ್ಯ ದಾಸ ಯೇಸುವಿನ ನಾಮದಲ್ಲಿ ಅದ್ಭುತಗಳೂ ಸೂಚಕಕಾರ್ಯಗಳೂ ಜರುಗುವಂತಾಗಲಿ.”</verse>
				<verse number="31">ಹೀಗೆ ಪ್ರಾರ್ಥನೆಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.</verse>
				<verse number="32">ಭಕ್ತವಿಶ್ವಾಸಿಗಳು ಒಗ್ಗಟ್ಟಿನಿಂದಲೂ ಒಮ್ಮನಸ್ಸಿನಿಂದಲೂ ಬಾಳುತ್ತಿದ್ದರು. ಯಾರೂ ತಮ್ಮ ಸೊತ್ತನ್ನು ತನ್ನದೇ ಎಂದು ಭಾವಿಸದೆ ಹುದುವಾಗಿ ಹಂಚಿಕೊಳ್ಳುತ್ತಿದ್ದರು.</verse>
				<verse number="33">ಪ್ರೇಷಿತರು ಪ್ರಭು ಯೇಸುವಿನ ಪುನರುತ್ಥಾನಕ್ಕೆ ಬಹುಸಾಮರ್ಥ್ಯದಿಂದ ಸಾಕ್ಷಿಕೊಡುತ್ತಿದ್ದರು. ಜನರು ಅವರೆಲ್ಲರನ್ನು ಗೌರವದಿಂದ ಕಾಣುತ್ತಿದ್ದರು.</verse>
				<verse number="34">ಅವರಲ್ಲಿ ಕೊರತೆಯಿದ್ದವರು ಒಬ್ಬರೂ ಇರಲಿಲ್ಲ.</verse>
				<verse number="35">ಕಾರಣ - ಹೊಲಗದ್ದೆ, ಮನೆಮಾರು ಇದ್ದವರೆಲ್ಲರೂ ಅವುಗಳನ್ನು ವಿಕ್ರಯಿಸಿ, ಬಂದ ಹಣವನ್ನು ತಂದು ಪ್ರೇಷಿತರಿಗೆ ಪಾದಕಾಣಿಕೆಯಾಗಿ ಒಪ್ಪಿಸುತ್ತಿದ್ದರು. ಇವರು ಅದನ್ನು ಪ್ರತಿ ಒಬ್ಬರಿಗೂ ಅವರವರ ಅವಶ್ಯಕತೆಗೆ ತಕ್ಕಂತೆ ಹಂಚುತ್ತಿದ್ದರು.</verse>
				<verse number="36">ಜೋಸೆಫ್ ಎಂಬ ಲೇವಿಯನು ಅವರ ಸಂಗಡ ಇದ್ದನು. ಇವನ ಹುಟ್ಟೂರು ಸೈಪ್ರಸ್. ಇವನಿಗೆ ‘ಬಾರ್ನಬ’ (ಎಂದರೆ ಪ್ರೋತ್ಸಾಹಪುತ್ರ) ಎಂದು ಪ್ರೇಷಿತರು ಹೆಸರಿಟ್ಟಿದ್ದರು.</verse>
				<verse number="37">ಇವನು ತನ್ನ ಜಮೀನನ್ನು ಮಾರಿ ಬಂದ ಹಣವನ್ನು ಪ್ರೇಷಿತರಿಗೆ ಪಾದಕಾಣಿಕೆಯಾಗಿ ಒಪ್ಪಿಸಿದನು.</verse>
			</chapter>
			<chapter number="5">
				<verse number="1">ಅನನೀಯ ಮತ್ತು ಸಫೈರ ಎಂಬ ದಂಪತಿಗಳಿದ್ದರು. ಇವರು ತಮ್ಮ ಆಸ್ತಿಯೊಂದನ್ನು ಮಾರಿದರು.</verse>
				<verse number="2">ಬಂದ ಹಣದಲ್ಲಿ ಒಂದು ಭಾಗವನ್ನು ಅನನೀಯನು, ತನ್ನ ಪತ್ನಿಯ ಸಮ್ಮತಿ ಪಡೆದು, ಬಚ್ಚಿಟ್ಟುಕೊಂಡನು. ಉಳಿದುದನ್ನು ಪ್ರೇಷಿತರಿಗೆ ಪಾದಕಾಣಿಕೆಯಾಗಿ ಒಪ್ಪಿಸಿದನು.</verse>
				<verse number="3">ಆಗ ಪೇತ್ರನು, “ಅನನೀಯಾ, ನಿನ್ನ ಆಸ್ತಿಯ ವಿಕ್ರಯದಿಂದ ಬಂದ ಹಣದ ಒಂದು ಭಾಗವನ್ನು ಬಚ್ಚಿಟ್ಟುಕೊಂಡು, ನೀನು ಪವಿತ್ರಾತ್ಮ ಅವರಿಗೆ ಏಕೆ ವಂಚನೆಮಾಡಿದೆ? ನಿನ್ನ ಹೃದಯದಲ್ಲಿ ಪಿಶಾಚಿಗೇಕೆ ಎಡೆಮಾಡಿಕೊಟ್ಟೆ?</verse>
				<verse number="4">ಮಾರುವುದಕ್ಕೆ ಮೊದಲು ಆಸ್ತಿ ನಿನಗೇ ಸೇರಿತ್ತು; ಮಾರಿದ ನಂತರವೂ ಅದರ ಹಣ ನಿನ್ನದೇ ಆಗಿತ್ತು. ಹೀಗಿರುವಲ್ಲಿ ಇಂಥಾ ದುಷ್ಟಯೋಚನೆ ಮಾಡಲು ನೀನೇಕೆ ಮನಸ್ಸುಮಾಡಿದೆ? ನೀನು ಸುಳ್ಳಾಡಿರುವುದು ಮನುಷ್ಯರಿಗಲ್ಲ, ದೇವರಿಗೆ,” ಎಂದನು.</verse>
				<verse number="5">ಈ ಮಾತುಗಳನ್ನು ಕೇಳಿದಾಕ್ಷಣವೇ ಅನನೀಯನು ಸತ್ತುಬಿದ್ದನು.</verse>
				<verse number="6">ಆಗ ಕೆಲವು ಯುವಕರು ಬಂದು ಅವನ ಶವವನ್ನು ಬಟ್ಟೆಯಲ್ಲಿ ಸುತ್ತಿ ಹೊತ್ತುಕೊಂಡು ಹೋಗಿ ಸಮಾಧಿಮಾಡಿದರು.</verse>
				<verse number="7">ಸುಮಾರು ಮೂರು ಗಂಟೆಗಳ ನಂತರ ಅವನ ಪತ್ನಿ ಅಲ್ಲಿಗೆ ಬಂದಳು. ಅಲ್ಲಿ ಸಂಭವಿಸಿದ್ದೇನೂ ಆಕೆಗೆ ತಿಳಿದಿರಲಿಲ್ಲ.</verse>
				<verse number="8">ಪೇತ್ರನು ಆಕೆಯನ್ನು ನೋಡಿ, “ನೀನು ಮತ್ತು ನಿನ್ನ ಪತಿ ಆಸ್ತಿಮಾರಿ ಪಡೆದ ಹಣದ ಮೊತ್ತ ಇಷ್ಟೇ ಏನು?” ಎಂದು ಕೇಳಿದನು. ಆಕೆ, “ಹೌದು, ಇಷ್ಟೇ,” ಎಂದು ಉತ್ತರಕೊಟ್ಟಳು.</verse>
				<verse number="9">ಪೇತ್ರನು, “ನೀನೂ ನಿನ್ನ ಪತಿಯೂ ಸರ್ವೇಶ್ವರನ ಆತ್ಮವನ್ನು ಪರೀಕ್ಷಿಸಲು ಹವಣಿಸಿದಿರೋ? ಇಗೋ, ನಿನ್ನ ಪತಿಯನ್ನು ಸಮಾಧಿಮಾಡಿಬಂದವರ ಕಾಲಿನ ಸಪ್ಪಳ. ಅವರು ಬಾಗಿಲ ಬಳಿಯಲ್ಲೇ ಇದ್ದಾರೆ. ಅವರು ನಿನ್ನನ್ನೂ ಹೊತ್ತುಕೊಂಡು ಹೋಗುವರು,” ಎಂದನು.</verse>
				<verse number="10">ಆಕ್ಷಣವೇ ಆಕೆಯೂ ಸತ್ತು ಅವನ ಕಾಲಬಳಿ ಬಿದ್ದಳು. ಒಳಗೆ ಬಂದ ಯುವಕರು ಆಕೆಯೂ ಸತ್ತುಬಿದ್ದಿರುವುದನ್ನು ಕಂಡು ಆಕೆಯನ್ನು ಹೊತ್ತುಕೊಂಡು ಹೋಗಿ ಪತಿಯ ಪಕ್ಕದಲ್ಲೇ ಸಮಾಧಿಮಾಡಿದರು.</verse>
				<verse number="11">ಇಡೀ ಧರ್ಮಸಭೆಯೂ ಇದನ್ನು ಕೇಳಿದ ಎಲ್ಲರೂ ಭಯಭ್ರಾಂತರಾದರು.</verse>
				<verse number="12">ಜನರೆಲ್ಲರ ಕಣ್ಮುಂದೆ ಅನೇಕ ಅದ್ಭುತಕಾರ್ಯಗಳೂ ಸೂಚಕಕಾರ್ಯಗಳೂ ಪ್ರೇಷಿತರ ಮುಖಾಂತರ ನಡೆಯುತ್ತಿದ್ದವು. ಭಕ್ತವಿಶ್ವಾಸಿಗಳೆಲ್ಲರೂ ಸೊಲೊಮೋನನ ಮಂಟಪದಲ್ಲಿ ಸಭೆಸೇರುತ್ತಿದ್ದರು.</verse>
				<verse number="13">ಹೊರಗಿನವರು ಅವರನ್ನು ಬಹಳವಾಗಿ ಹೊಗಳುತ್ತಿದ್ದರೂ ಅವರ ಸಂಗಡ ಸೇರಲು ಯಾರಿಗೂ ಧೈರ್ಯವಿರಲಿಲ್ಲ.</verse>
				<verse number="14">ಆದರೂ ಪ್ರಭುವನ್ನು ವಿಶ್ವಾಸಿಸುತ್ತಿದ್ದ ಸ್ತ್ರೀಪುರುಷರ ಸಂಖ್ಯೆ ಅಧಿಕವಾಗುತ್ತಾ ಬಂದಿತು.</verse>
				<verse number="15">ಪೇತ್ರನು ಹಾದುಹೋಗುವಾಗ ಆತನ ನೆರಳಾದರೂ ಕೆಲವರ ಮೇಲೆ ಬೀಳಲೆಂದು ಜನರು ರೋಗಿಗಳನ್ನು ಹಾಸಿಗೆ ಅಥವಾ ಡೋಲಿಗಳ ಸಮೇತ ಹೊತ್ತುತಂದು ಹಾದಿಗಳಲ್ಲಿ ಮಲಗಿಸುತ್ತಿದ್ದರು.</verse>
				<verse number="16">ಜೆರುಸಲೇಮಿನ ಸುತ್ತಮುತ್ತಲಿನ ಊರುಗಳಿಂದಲೂ ರೋಗಿಗಳನ್ನು ಮತ್ತು ಪಿಶಾಚಿಪೀಡಿತರನ್ನು ಜನರು ತರುತ್ತಿದ್ದರು; ಎಲ್ಲರೂ ಸ್ವಸ್ಥರಾಗುತ್ತಿದ್ದರು.</verse>
				<verse number="17">ಇಂತಿರಲು ಪ್ರಧಾನಯಾಜಕನೂ ಅವನ ಸಂಗಡವಿದ್ದ ಸ್ಥಳೀಯ ಸದ್ದುಕಾಯರೂ ಪ್ರೇಷಿತರ ಬಗ್ಗೆ ತೀವ್ರ ಅಸೂಯೆಪಟ್ಟು ಅವರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಿದರು.</verse>
				<verse number="18">ಪ್ರೇಷಿತರನ್ನು ಬಂಧಿಸಿ ಊರ ಸೆರೆಯಲ್ಲಿಟ್ಟರು.</verse>
				<verse number="19">ಆ ರಾತ್ರಿಯೇ ಪ್ರಭುವಿನ ದೂತನೊಬ್ಬನು ಸೆರೆಮನೆಯ ದ್ವಾರಗಳನ್ನು ತೆರೆದು ಪ್ರೇಷಿತರನ್ನು ಹೊರಕ್ಕೆ ತಂದನು.</verse>
				<verse number="20">“ಹೋಗಿರಿ, ಮಹಾದೇವಾಲಯದಲ್ಲಿ ನಿಂತು ಈ ನವಜೀವದ ಬಗ್ಗೆ ಜನರಿಗೆ ಬೋಧಿಸಿರಿ,” ಎಂದನು.</verse>
				<verse number="21">ಅದರಂತೆ ಪ್ರೇಷಿತರು ಮುಂಜಾವದಲ್ಲೇ ದೇವಾಲಯವನ್ನು ಪ್ರವೇಶಿಸಿ ಬೋಧಿಸಲಾರಂಭಿಸಿದರು. ಇತ್ತ ಪ್ರಧಾನಯಾಜಕನೂ ಅವನ ಸಂಗಡಿಗರೂ ಜೊತೆಗೂಡಿ ಯೆಹೂದ್ಯ ಪ್ರಮುಖರನ್ನೊಳಗೊಂಡ ಶ್ರೇಷ್ಠ ನ್ಯಾಯಸಭೆಯನ್ನು ಕರೆದರು. ಅನಂತರ ಪ್ರೇಷಿತರನ್ನು ಆ ಸಭೆಯ ಮುಂದೆ ಕರೆತರುವಂತೆ ಸೆರೆಮನೆಯ ಅಧಿಕಾರಿಗಳಿಗೆ ಆಜ್ಞೆಯಿತ್ತರು.</verse>
				<verse number="22">ಈ ಅಧಿಕಾರಿಗಳು ಸೆರೆಮನೆಗೆ ಬಂದಾಗ ಅಲ್ಲಿ ಪ್ರೇಷಿತರನ್ನು ಕಾಣಲಿಲ್ಲ. ಹಿಂದಿರುಗಿ ಹೋಗಿ ನ್ಯಾಯಸಭೆಗೆ ಈ ವಿಷಯವನ್ನು ವರದಿಮಾಡಿದರು;</verse>
				<verse number="23">“ನಾವು ಸೆರೆಮನೆಗೆ ಹೋದಾಗ ಅದಕ್ಕೆ ಹಾಕಿದ್ದ ಬೀಗ ಮುದ್ರೆಯೇನೋ ಭದ್ರವಾಗಿತ್ತು. ಪಹರೆಯವರು ದ್ವಾರದಲ್ಲಿ ಕಾವಲಿದ್ದರು. ಆದರೆ ದ್ವಾರವನ್ನು ತೆರೆದು ನೋಡಿದಾಗ ಒಳಗೆ ಯಾರನ್ನೂ ನಾವು ಕಾಣಲಿಲ್ಲ,” ಎಂದು ತಿಳಿಸಿದರು.</verse>
				<verse number="24">ದೇವಾಲಯದ ದಳಪತಿ ಮತ್ತು ಮುಖ್ಯಯಾಜಕರು ಇದನ್ನು ಕೇಳಿ, ಇದರಿಂದೇನಾಗುವುದೋ ಎಂದು ಕಳವಳಗೊಂಡರು.</verse>
				<verse number="25">ಅಷ್ಟರಲ್ಲಿ ಒಬ್ಬನು ಅಲ್ಲಿಗೆ ಬಂದು, “ಇಗೋ, ನೀವು ಸೆರೆಮನೆಯಲ್ಲಿಟ್ಟವರು ದೇವಾಲಯದಲ್ಲಿ ನಿಂತು ಜನರಿಗೆ ಬೋಧಿಸುತ್ತಿದ್ದಾರೆ,” ಎಂದನು.</verse>
				<verse number="26">ಆಗ ಆ ದಳಪತಿ ಅಧಿಕಾರಿಗಳೊಡನೆ ಹೋಗಿ ಪ್ರೇಷಿತರನ್ನು ಕರೆದುಕೊಂಡು ಬಂದನು. ಜನರು ತಮ್ಮ ಮೇಲೆ ಕಲ್ಲು ತೂರಬಹುದೆಂಬ ಭಯದಿಂದ ಪ್ರೇಷಿತರ ಮೇಲೆ ಅವರು ಯಾವ ಬಲಪ್ರಯೋಗವನ್ನೂ ಮಾಡಲಿಲ್ಲ.</verse>
				<verse number="27">ಪ್ರೇಷಿತರನ್ನು ಕರೆತಂದು ನ್ಯಾಯಸಭೆಯ ಮುಂದೆ ನಿಲ್ಲಿಸಲಾಯಿತು. ಪ್ರಧಾನಯಾಜಕನು ಅವರನ್ನು ಉದ್ದೇಶಿಸಿ,</verse>
				<verse number="28">“ಆ ವ್ಯಕ್ತಿಯ ಹೆಸರಿನಲ್ಲಿ ಉಪದೇಶ ಮಾಡಕೂಡದು ಎಂದು ನಿಮಗೆ ಕಟ್ಟಪ್ಪಣೆ ಮಾಡಿದೆವು. ಆದರೂ ನೀವು ಮಾಡಿರುವುದೇನು? ನಿಮ್ಮ ಬೋಧನೆ ಜೆರುಸಲೇಮ್ ಆದ್ಯಂತ ಹಬ್ಬಿಹರಡಿದೆ. ಅಷ್ಟುಮಾತ್ರವಲ್ಲ, ಆ ವ್ಯಕ್ತಿಯ ಕೊಲೆಗೆ ನಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದಿರುವಿರಿ,” ಎಂದು ಆಪಾದಿಸಿದನು.</verse>
				<verse number="29">ಅದಕ್ಕೆ ಪ್ರತ್ಯುತ್ತರವಾಗಿ ಪೇತ್ರ ಮತ್ತು ಉಳಿದ ಪ್ರೇಷಿತರು, “ನಾವು ವಿಧೇಯರಾಗಬೇಕಾದದ್ದು ದೇವರಿಗೆ, ಮಾನವರಿಗಲ್ಲ.</verse>
				<verse number="30">ನೀವು ಶಿಲುಬೆಗೇರಿಸಿ ಕೊಂದುಹಾಕಿದ ಯೇಸುಸ್ವಾಮಿಯನ್ನು ನಮ್ಮ ಪಿತೃಗಳ ದೇವರು ಜೀವಕ್ಕೆ ಎಬ್ಬಿಸಿದ್ದಾರೆ.</verse>
				<verse number="31">ದೇವರು ಅವರನ್ನು ತಮ್ಮ ಬಲಪಾರ್ಶ್ವಕ್ಕೆ ಏರಿಸಿ ಮುಂದಾಳನ್ನಾಗಿಯೂ ಲೋಕೋದ್ಧಾರಕನನ್ನಾಗಿಯೂ ನೇಮಿಸಿದ್ದಾರೆ. ಇಸ್ರಯೇಲಿನ ಜನರು ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿ ಪಾಪಕ್ಷಮೆಯನ್ನು ಪಡೆಯಲು ಇವರ ಮುಖಾಂತರ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.</verse>
				<verse number="32">ಈ ಘಟನೆಗಳಿಗೆ ನಾವು ಸಾಕ್ಷಿಗಳು; ನಾವು ಮಾತ್ರವಲ್ಲ, ದೈವೇಚ್ಛೆಯಂತೆ ನಡೆಯುವವರಿಗೆ ದೇವರು ದಯಪಾಲಿಸುವ ಪವಿತ್ರಾತ್ಮ ಅವರು ಕೂಡ ಸಾಕ್ಷಿಯಾಗಿದ್ದಾರೆ,” ಎಂದನು.</verse>
				<verse number="33">ಇದನ್ನು ಕೇಳಿದ ಸಭಾಸದಸ್ಯರು ಕ್ರೋಧಭರಿತರಾಗಿ ಪ್ರೇಷಿತರನ್ನು ಕೊಲ್ಲಬೇಕೆಂದಿದ್ದರು.</verse>
				<verse number="34">ಆಗ ಆ ಸಭಾಸದಸ್ಯರಲ್ಲಿ ಒಬ್ಬನಾದ ಗಮಲಿಯೇಲ್ ಎಂಬ ಫರಿಸಾಯನು ಅಲ್ಲಿದ್ದನು. ಅವನೊಬ್ಬ ಗೌರವಾನ್ವಿತ ಮತ್ತು ಧರ್ಮಪಂಡಿತ. ಅವನು ಎದ್ದುನಿಂತು ಪ್ರೇಷಿತರನ್ನು ಸ್ವಲ್ಪಹೊತ್ತು ಸಭೆಯಿಂದ ಹೊರಗೆ ಕಳುಹಿಸುವಂತೆ ಹೇಳಿ</verse>
				<verse number="35">ಸಭೆಯನ್ನುದ್ದೇಶಿಸಿ, “ಇಸ್ರಯೇಲ್ ಸಭಾಸದಸ್ಯರೇ, ಇವರ ವಿರುದ್ಧ ನೀವು ಕೈಗೊಳ್ಳಬೇಕೆಂದಿರುವ ಕ್ರಮದ ಬಗ್ಗೆ ಎಚ್ಚರಿಕೆಯಿಂದಿರಿ.</verse>
				<verse number="36">ಸ್ವಲ್ಪಕಾಲಕ್ಕೆ ಹಿಂದೆ ತೈದ ಎಂಬವನಿದ್ದ. ತಾನೊಬ್ಬ ಮಹಾಪುರುಷನು ಎಂದು ಹೇಳಿಕೊಳ್ಳುತ್ತಿದ್ದ. ಸುಮಾರು ನಾನೂರು ಮಂದಿ ಅವನ ಅನುಯಾಯಿಗಳಾದರು. ಅವನ ಕೊಲೆಯಾದದ್ದೇ, ಅವನನ್ನು ಹಿಂಬಾಲಿಸಿದವರೆಲ್ಲರೂ ಚದರಿಹೋದರು. ಅವನ ಪಕ್ಷ ನಿರ್ನಾಮವಾಯಿತು.</verse>
				<verse number="37">ಅನಂತರ ಜನಗಣತಿಯ ಕಾಲದಲ್ಲಿ ಗಲಿಲೇಯದ ಯೂದ ಎಂಬವನು ಪ್ರಸಿದ್ಧಿಗೆ ಬಂದ. ತನ್ನೆಡೆಗೆ ಹಲವರನ್ನು ಆಕರ್ಷಿಸಿಕೊಂಡ. ಅವನೂ ಹತನಾದ. ಹಿಂಬಾಲಕರೆಲ್ಲರೂ ಚದರಿಹೋದರು.</verse>
				<verse number="38">ಆದುದರಿಂದ ನಾನು ನಿಮಗೆ ಹೇಳುವುದೇನೆಂದರೆ: ಈ ವ್ಯಕ್ತಿಗಳ ಗೊಡವೆಗೆ ಹೋಗಬೇಡಿ; ಇವರನ್ನು ಸುಮ್ಮನೆ ಬಿಟ್ಟುಬಿಡಿ. ಇವರ ಯೋಜನೆ ಅಥವಾ ಕಾರ್ಯ ಮಾನವ ಕಲ್ಪಿತವಾಗಿದ್ದರೆ ಅದರಷ್ಟಕ್ಕೆ ಅದೇ ನಾಶವಾಗುವುದು.</verse>
				<verse number="39">ಇದು ದೈವಸಂಕಲ್ಪವಾಗಿದ್ದರೆ ಅವರನ್ನು ನಾಶಮಾಡಲು ನಿಮ್ಮಿಂದಾಗದು. ನೀವು ದೇವರಿಗೆ ವಿರುದ್ಧ ಹೋರಾಡಿದಂತೆ ಆದೀತು,” ಎಂದು ಹೇಳಿದನು. ಸಭಾಸದಸ್ಯರು ಗಮಲಿಯೇಲನ ಸಲಹೆಯನ್ನು ಅಂಗೀಕರಿಸಿದರು.</verse>
				<verse number="40">ಪ್ರೇಷಿತರನ್ನು ಒಳಗೆ ಕರೆದು, ಚಾವಟಿಯಿಂದ ಹೊಡೆದು, ಇನ್ನು ಮೇಲೆ ಯೇಸುವಿನ ಹೆಸರಿನಲ್ಲಿ ಬೋಧಿಸಬಾರದೆಂದು ಕಟ್ಟಪ್ಪಣೆಮಾಡಿ ಅವರನ್ನು ಬಿಟ್ಟುಬಿಟ್ಟರು.</verse>
				<verse number="41">ಯೇಸುವಿನ ನಾಮಕ್ಕೋಸ್ಕರ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದೆವೆಂದು ಪ್ರೇಷಿತರು ಸಂತೋಷಭರಿತರಾಗಿ ನ್ಯಾಯಸಭೆಯಿಂದ ಹೊರಬಂದರು.</verse>
				<verse number="42">ಯೇಸುವೇ ಲೋಕೋದ್ಧಾರಕನೆಂದು ಪ್ರತಿದಿನ ದೇವಾಲಯದಲ್ಲೂ ಮನೆಮನೆಗಳಲ್ಲೂ ಉಪದೇಶಿಸುವುದರಲ್ಲಿ ಹಾಗೂ ಸಾರುವುದರಲ್ಲಿ ನಿರತರಾದರು.</verse>
			</chapter>
			<chapter number="6">
				<verse number="1">ಇತ್ತ ಭಕ್ತವಿಶ್ವಾಸಿಗಳ ಸಂಖ್ಯೆ ಹೆಚ್ಚುತ್ತಾ ಬಂದಿತು. ಆಗ ಗ್ರೀಕ್ ಮಾತನಾಡುತ್ತಾ ಇದ್ದವರ ಹಾಗೂ ಸ್ಥಳೀಯ ಭಾಷೆ ಮಾತನಾಡುತ್ತಿದ್ದವರ ನಡುವೆ ಬಿನ್ನಾಭಿಪ್ರಾಯ ಉಂಟಾಯಿತು. ದಿನನಿತ್ಯ ಮಾಡುವ ದೀನದಲಿತರ ಸೇವೆಯಲ್ಲಿ ತಮ್ಮ ಕಡೆಯ ವಿಧವೆಯರನ್ನು ಅಲಕ್ಷ್ಯಮಾಡಲಾಗುತ್ತಿದೆ ಎಂದು ಗ್ರೀಕರು ಗೊಣಗುಟ್ಟಿದರು.</verse>
				<verse number="2">ಆಗ ಹನ್ನೆರಡುಮಂದಿ ಪ್ರೇಷಿತರು ಭಕ್ತವಿಶ್ವಾಸಿಗಳ ಸಭೆಯನ್ನು ಕರೆದು, “ನಾವು ದೇವರ ವಾಕ್ಯದ ಬೋಧನೆಯನ್ನು ಅವಗಣಿಸಿ ಊಟೋಪಚಾರಗಳ ಸೇವೆಯಲ್ಲಿ ಮಗ್ನರಾಗಿ ಇರುವುದು ಸರಿಯಲ್ಲ.</verse>
				<verse number="3">ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಸನ್ಮಾನಿತರೂ ಆಗಿರುವ ಏಳು ವ್ಯಕ್ತಿಗಳನ್ನು ನಿಮ್ಮಿಂದ ಆರಿಸಿಕೊಳ್ಳಿ, ನಾವು ಅವರಿಗೆ ಈ ಜವಾಬ್ದಾರಿಯನ್ನು ವಹಿಸುತ್ತೇವೆ.</verse>
				<verse number="4">ನಾವಾದರೋ ಪ್ರಾರ್ಥನೆಯಲ್ಲೂ ವಾಕ್ಯೋಪದೇಶದಲ್ಲೂ ನಿರತರಾಗುತ್ತೇವೆ,” ಎಂದರು.</verse>
				<verse number="5">ಪ್ರೇಷಿತರ ಈ ಸಲಹೆಯನ್ನು ಇಡೀ ಸಭೆ ಅನುಮೋದಿಸಿತು. ಅಂತೆಯೇ ಅಗಾಧ ವಿಶ್ವಾಸ ಉಳ್ಳವನೂ ಪವಿತ್ರಾತ್ಮಭರಿತನೂ ಆದ ಸ್ತೇಫನ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿಯೋಕ್ಯದ ನಿಕೊಲಾಯ ಎಂಬ ಏಳುಮಂದಿಯನ್ನು ಆರಿಸಿಕೊಂಡರು.</verse>
				<verse number="6">ಪ್ರೇಷಿತರ ಮುಂದೆ ಅವರನ್ನು ನಿಲ್ಲಿಸಿದರು. ಪ್ರೇಷಿತರು ಪ್ರಾರ್ಥನೆಮಾಡಿ ಅವರ ಮೇಲೆ ಹಸ್ತನಿಕ್ಷೇಪ ಮಾಡಿದರು.</verse>
				<verse number="7">ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು.</verse>
				<verse number="8">ಸ್ತೇಫನನು ದೈವಾನುಗ್ರಹದಿಂದಲೂ ಶಕ್ತಿಯಿಂದಲೂ ತುಂಬಿದ್ದನು. ಜನರ ಮಧ್ಯೆ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದನು.</verse>
				<verse number="9">ಆದರೆ ಕೆಲವರು ಸ್ತೇಫನನ ವಿರೋಧಿಗಳಾಗಿದ್ದರು. ಇವರು ‘ಬಿಡುಗಡೆ ಹೊಂದಿದವರು’ ಎಂಬವರ ಪ್ರಾರ್ಥನಾ ಮಂದಿರಕ್ಕೆ ಸೇರಿದವರು. ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರೂ ಇದರ ಸದಸ್ಯರಾಗಿದ್ದರು. ಇವರೊಡನೆ ಸಿಲಿಸಿಯ ಹಾಗೂ ಏಷ್ಯಾದ ಯೆಹೂದ್ಯರೂ ಸೇರಿ ಸ್ತೇಫನನೊಂದಿಗೆ ತರ್ಕ ಮಾಡತೊಡಗಿದರು.</verse>
				<verse number="10">ಆದರೆ ಸ್ತೇಫನನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮಶಕ್ತಿಯನ್ನೂ ಎದುರಿಸಲು ಅವರಿಂದಾಗಲಿಲ್ಲ.</verse>
				<verse number="11">ಆದುದರಿಂದ ಕೆಲವರಿಗೆ ಲಂಚಕೊಟ್ಟು ‘ಸ್ತೇಫನನು ಮೋಶೆಯನ್ನೂ ದೇವರನ್ನೂ ದೂಷಿಸುತ್ತಾನೆ; ಇದನ್ನು ನಾವು ಕೇಳಿದ್ದೇವೆ’ ಎಂದು ಹೇಳಿಸಿದರು.</verse>
				<verse number="12">ಹೀಗೆ ಜನರನ್ನೂ ಪ್ರಮುಖರನ್ನೂ ನ್ಯಾಯಶಾಸ್ತ್ರಜ್ಞರನ್ನೂ ಪ್ರಚೋದಿಸಿದರು. ಸ್ತೇಫನನನ್ನು ಬಂಧಿಸಿ ನ್ಯಾಯಸಭೆಯ ಮುಂದೆ ಎಳೆದು ತರುವಂತೆ ಮಾಡಿದರು.</verse>
				<verse number="13">ಕೆಲವು ಸುಳ್ಳುಸಾಕ್ಷಿಗಳನ್ನು ನೇಮಿಸಿಕೊಂಡು ಅವರಿಂದ, ‘ಇವನು ಯಾವಾಗಲೂ ನಮ್ಮ ಪವಿತ್ರದೇವಾಲಯದ ವಿರುದ್ಧ ಹಾಗೂ ಮೋಶೆಯ ಧರ್ಮಶಾಸ್ತ್ರದ ವಿರುದ್ಧ ಮಾತನಾಡುತ್ತಾನೆ.</verse>
				<verse number="14">ನಜರೇತಿನ ಆ ಯೇಸು ಈ ಮಹಾದೇವಾಲಯವನ್ನು ನಾಶಗೊಳಿಸುವನೆಂದೂ ಮೋಶೆ ನಮಗೆ ವಿಧಿಸಿದ ಸಂಪ್ರದಾಯಗಳನ್ನು ಬದಲಿಸುವನೆಂದೂ ಇವನು ಹೇಳಿರುತ್ತಾನೆ. ಇದನ್ನು ನಾವು ಕೇಳಿದ್ದೇವೆ,’ ಎಂದು ಹೇಳಿಸಿದರು.</verse>
				<verse number="15">ನ್ಯಾಯಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನ ಮುಖವನ್ನೇ ದಿಟ್ಟಿಸಿ ನೋಡಿದರು. ಅದು ದೇವದೂತನ ಮುಖದಂತೆ ಕಂಗೊಳಿಸಿತು.</verse>
			</chapter>
			<chapter number="7">
				<verse number="1">ಪ್ರಧಾನಯಾಜಕನು, “ಇವರು ನಿನ್ನ ವಿರುದ್ಧ ಹೇಳುತ್ತಿರುವುದು ಸತ್ಯವೋ?” ಎಂದು ಸ್ತೇಫನನನ್ನು ಕೇಳಿದನು.</verse>
				<verse number="2">ಪ್ರತ್ಯುತ್ತರವಾಗಿ ಅವನು ಹೀಗೆಂದನು: “ಭ್ರಾತೃಗಳೇ, ಪಿತೃಗಳೇ, ಕಿವಿಗೊಡಿ. ನಮ್ಮ ಪಿತಾಮಹ ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪಟೋಮಿಯದಲ್ಲಿ ಇದ್ದನು. ಆಗ ಮಹಿಮಾ ಸ್ವರೂಪರಾದ ದೇವರು ಅವನಿಗೆ ದರ್ಶನವಿತ್ತರು.</verse>
				<verse number="3">‘ನೀನು ನಿನ್ನ ಬಂಧುಬಳಗವನ್ನೂ ತಾಯ್ನಾಡನ್ನೂ ಬಿಟ್ಟು ನಾನು ತೋರಿಸುವ ನಾಡಿಗೆ ಹೋಗು,’ ಎಂದರು.</verse>
				<verse number="4">ಅಂತೆಯೇ ಅವನು ಕಸ್ದೀಯರ ನಾಡನ್ನು ಬಿಟ್ಟು ಹಾರಾನಿನಲ್ಲಿ ವಾಸಮಾಡಿದನು; ಅವನ ತಂದೆಯ ಮರಣಾನಂತರ ದೇವರು ಅವನನ್ನು ನೀವು ವಾಸಮಾಡುತ್ತಿರುವ ಈ ನಾಡಿಗೆ ಕರೆತಂದರು.</verse>
				<verse number="5">ಆಗ ಇಲ್ಲಿ ಕಾಲಿಡುವಷ್ಟು ನೆಲವನ್ನು ಕೂಡ ದೇವರು ಅವನಿಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ. ಸ್ವಂತ ಸೊತ್ತಾಗಿ ಅವನಿಗೂ ಅವನ ಬಳಿಕ ಅವನ ಸಂತತಿಗೂ ಕೊಡುವುದಾಗಿ ವಾಗ್ದಾನಮಾಡಿದರಷ್ಟೆ. ಆಗ ಅಬ್ರಹಾಮನಿಗೆ ಮಕ್ಕಳೇ ಇರಲಿಲ್ಲ.</verse>
				<verse number="6">ಇದಲ್ಲದೆ ದೇವರು ಅಬ್ರಹಾಮನಿಗೆ, ‘ನಿನ್ನ ಸಂತತಿಯವರು ಅನ್ಯದೇಶದಲ್ಲಿ ಗುಲಾಮರಾಗುವರು; ನಾನೂರು ವರ್ಷಗಳವರೆಗೆ ದಬ್ಬಾಳಿಕೆಗೆ ಒಳಗಾಗುವರು.</verse>
				<verse number="7">ಅವರಿಂದ ಗುಲಾಮಗಿರಿಯನ್ನು ಪಡೆಯುವ ಜನಾಂಗಕ್ಕೆ ನಾನು ದಂಡನೆ ವಿಧಿಸುವೆನು. ಅನಂತರ ಅವರು ಅಲ್ಲಿಂದ ಹೊರಬಂದು ನನ್ನನ್ನು ಈ ಸ್ಥಳದಲ್ಲೇ ಆರಾಧಿಸುವರು,’ ಎಂದರು.</verse>
				<verse number="8">ಆಮೇಲೆ ದೇವರು ಅಬ್ರಹಾಮನೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಆ ಒಡಂಬಡಿಕೆಯ ಚಿಹ್ನೆಯನ್ನಾಗಿ ಸುನ್ನತಿಯನ್ನು ವಿಧಿಸಿದರು.ಅದರಂತೆ ಅಬ್ರಹಾಮನು ತನ್ನ ಮಗ ಇಸಾಕನಿಗೆ ಹುಟ್ಟಿದ ಎಂಟನೆಯ ದಿನ ಸುನ್ನತಿಯನ್ನು ಮಾಡಿದನು. ಇಸಾಕನು ತನ್ನ ಮಗ ಯಕೋಬನಿಗೂ, ಯಕೋಬನು ತನ್ನ ಹನ್ನೆರಡು ಮಕ್ಕಳಾದ ನಮ್ಮ ಪಿತಾಮಹರಿಗೂ ಹಾಗೆಯೇ ಮಾಡಿದನು.</verse>
				<verse number="9">“ಈ ಪಿತಾಮಹರು ಜೋಸೆಫನ ಮೇಲೆ ಮತ್ಸರ ತಾಳಿ ಅವನನ್ನು ಈಜಿಪ್ಟಿನವರಿಗೆ ಗುಲಾಮನನ್ನಾಗಿ ಮಾರಿದರು. ಆದರೆ ದೇವರು ಅವನೊಂದಿಗೆ ಇದ್ದು,</verse>
				<verse number="10">ಎಲ್ಲಾ ಆಪತ್ತು ವಿಪತ್ತುಗಳಿಂದ ಅವನನ್ನು ಪಾರುಮಾಡಿದರು. ಅವನು ಈಜಿಪ್ಟಿನ ಅರಸ ಫರೋಹನ ಆಸ್ಥಾನಕ್ಕೆ ಬಂದಾಗ ದೇವರು ಅವನಿಗೆ ಜ್ಞಾನಸಂಪನ್ನತೆಯನ್ನಿತ್ತು ಅರಸನ ಮೆಚ್ಚುಗೆಗೆ ಪಾತ್ರನಾಗುವಂತೆ ಅನುಗ್ರಹಿಸಿದರು. ಫರೋಹನು ಅವನನ್ನು ರಾಜ್ಯಪಾಲನನ್ನಾಗಿಯೂ ಅರಮನೆಯ ಮೇಲ್ವಿಚಾರಕನನ್ನಾಗಿಯೂ ನೇಮಿಸಿದನು.</verse>
				<verse number="11">ಈಜಿಪ್ಟ್ ಹಾಗೂ ಕಾನಾನ್ ದೇಶಗಳಲ್ಲಿ ಕ್ಷಾಮ ತಲೆದೋರಿದಾಗ ಜನರು ಕಷ್ಟಸಂಕಟಗಳಿಗೆ ಒಳಗಾದರು. ನಮ್ಮ ಪೂರ್ವಜರು ಆಹಾರವಿಲ್ಲದೆ ಅವಸ್ಥೆಪಟ್ಟರು.</verse>
				<verse number="12">ಈಜಿಪ್ಟ್ ದೇಶದಲ್ಲಿ ಧಾನ್ಯ ಇರುವುದೆಂದು ಅರಿತು ಯಕೋಬನು, ಮೊದಲ ಬಾರಿಗೆ ತನ್ನ ಪುತ್ರರನ್ನು ಅಲ್ಲಿಗೆ ಕಳುಹಿಸಿದನು.</verse>
				<verse number="13">ಎರಡನೆಯ ಬಾರಿ ಅವರು ಬಂದಾಗ ಜೋಸೆಫನು ತನ್ನ ಗುರುತನ್ನು ಸಹೋದರರಿಗೆ ತಿಳಿಸಿದನು. ಆಗ ಫರೋಹನಿಗೆ ಜೋಸೆಫನ ವಂಶದ ಪರಿಚಯವಾಯಿತು.</verse>
				<verse number="14">ಅನಂತರ ತನ್ನ ತಂದೆ ಯಕೋಬನೂ ಅವನ ಬಂಧುಬಳಗದವರೂ ಈಜಿಪ್ಟಿಗೆ ಬರುವಂತೆ ಜೋಸೆಫನು ಹೇಳಿಕಳುಹಿಸಿದನು.</verse>
				<verse number="15">ಇವರ ಒಟ್ಟು ಸಂಖ್ಯೆ ಎಪ್ಪತ್ತೈದು. ಯಕೋಬನು ಈಜಿಪ್ಟಿಗೆ ಹೋದನು. ಅವನೂ ನಮ್ಮ ಪಿತಾಮಹರೂ ಅಲ್ಲೇ ನಿಧನರಾದರು.</verse>
				<verse number="16">ಅವರ ಅವಶೇಷಗಳನ್ನು ಮರಳಿ ಶೇಕೆಮಿಗೆ ಕೊಂಡೊಯ್ಯಲಾಯಿತು. ಅಲ್ಲಿ ಹಾಮೋರ್ ಎಂಬವನ ಮಕ್ಕಳಿಂದ ಅಬ್ರಹಾಮನು ಕ್ರಯಕ್ಕೆ ಕೊಂಡುಕೊಂಡಿದ್ದ ಸಮಾಧಿಯಲ್ಲಿ ಹೂಳಿದರು.</verse>
				<verse number="17">“ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವ ಕಾಲವು ಸಮೀಪಿಸಿತು. ಈಗಾಗಲೇ ಈಜಿಪ್ಟ್ ದೇಶದಲ್ಲಿ ನಮ್ಮ ಜನರ ಸಂಖ್ಯೆ ಅಧಿಕವಾಗಿ ಬೆಳೆದಿತ್ತು.</verse>
				<verse number="18">ಕಡೆಗೆ ಜೋಸೆಫನನ್ನೇ ಅರಿಯದ ಬೇರೊಬ್ಬ ಅರಸ ರಾಜ್ಯವಾಳಲಾರಂಭಿಸಿದನು.</verse>
				<verse number="19">ಅವನು ನಮ್ಮ ಜನರೊಡನೆ ಕುಯುಕ್ತಿಯಿಂದ ನಡೆದುಕೊಂಡನು. ಅವರ ಹಸುಳೆಗಳನ್ನು ನಿರ್ನಾಮಮಾಡಲು ಅವುಗಳನ್ನು ಹೊರಗೆ ಹಾಕಬೇಕೆಂದು ಬಲಾತ್ಕಾರಮಾಡಿದನು.</verse>
				<verse number="20">ಸುರಸುಂದರನಾದ ಮೋಶೆ ಜನಿಸಿದ್ದು ಈ ಸಂದರ್ಭದಲ್ಲೇ. ಅವನು ಮೂರು ತಿಂಗಳವರೆಗೆ ಮನೆಯಲ್ಲೇ ಬೆಳೆದನು.</verse>
				<verse number="21">ಅನಂತರ ಅವನನ್ನು ಮನೆಯಿಂದ ದೂರವಿಟ್ಟಿದ್ದಾಗ, ಫರೋಹನ ಮಗಳು ಅವನನ್ನು ತನ್ನ ಪಾಲನೆಗೆ ತೆಗೆದುಕೊಂಡು ಸ್ವಂತ ಮಗನಂತೆ ಸಾಕಿದಳು.</verse>
				<verse number="22">ಅವನು ಈಜಿಪ್ಟರ ಸಕಲ ವಿದ್ಯೆಗಳಲ್ಲಿ ಪಾರಂಗತನಾಗಿ, ನಡೆಯಲ್ಲೂ ನುಡಿಯಲ್ಲೂ ಸಮರ್ಥನಾದನು.</verse>
				<verse number="23">“ಮೋಶೆಗೆ ನಲವತ್ತು ವರ್ಷ ವಯಸ್ಸು ಆಗಿದ್ದಾಗ ಅವನು ತನ್ನ ಸೋದರ ಇಸ್ರಯೇಲರನ್ನು ಸಂದರ್ಶಿಸಲು ಇಷ್ಟಪಟ್ಟು ಹೊರಟನು.</verse>
				<verse number="24">ಆಗ ಅವರಲ್ಲಿ ಒಬ್ಬನು ಈಜಿಪ್ಟಿನವನಿಂದ ಅನ್ಯಾಯವಾಗಿ ಹಿಂಸೆಪಡುತ್ತಿರುವುದನ್ನು ಕಂಡನು. ಅವನ ಸಹಾಯಕ್ಕೆ ಹೋಗಿ ಈಜಿಪ್ಟಿನವನನ್ನು ಕೊಂದು ಸೇಡುತೀರಿಸಿದನು.</verse>
				<verse number="25">ಸ್ವಜನರ ಬಿಡುಗಡೆಗೆ ದೇವರು ತನ್ನನ್ನು ನೇಮಿಸಿರುವರು; ತನ್ನ ಸ್ವಂತಜನರು ಇದನ್ನು ಅರ್ಥಮಾಡಿಕೊಳ್ಳುವರು ಎಂದು ಮೋಶೆ ಭಾವಿಸಿದ್ದನು. ಆದರೆ, ಅವರು ಅರ್ಥಮಾಡಿಕೊಳ್ಳಲಿಲ್ಲ.</verse>
				<verse number="26">ಮಾರನೆಯ ದಿನ ಇಬ್ಬರು ಇಸ್ರಯೇಲರೇ ಜಗಳವಾಡುತ್ತಿರುವುದನ್ನು ಕಂಡನು. ಮೋಶೆ ಅವರನ್ನು ಸಮಾಧಾನಗೊಳಿಸಲು ಪ್ರಯತ್ನಿಸಿದನು. ಅವರಿಗೆ, ‘ಗೆಳೆಯರೇ, ನೀವು ಸಹೋದರರಲ್ಲವೆ? ಹೀಗೇಕೆ ಕಿತ್ತಾಡುತ್ತಿದ್ದೀರಿ?’ ಎಂದು ಸಮಾಧಾನ ಪಡಿಸಲು ಯತ್ನಿಸಿದನು.</verse>
				<verse number="27">ಆಗ ಆಕ್ರಮಣ ಮಾಡುತ್ತಿದ್ದವನು ಮೋಶೆಯನ್ನು ಹಿಂದಕ್ಕೆ ತಳ್ಳಿ, ‘ನಮ್ಮ ನ್ಯಾಯತೀರಿಸಲು ನಿನಗೆ ಅಧಿಕಾರವನ್ನು ಕೊಟ್ಟವರು ಯಾರು?</verse>
				<verse number="28">ನಿನ್ನೆ ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಲ್ಲಬೇಕೆಂದಿರುವೆಯಾ?’ ಎಂದು ಪ್ರಶ್ನಿಸಿದನು.</verse>
				<verse number="29">ಇದನ್ನು ಕೇಳಿದ್ದೇ ಮೋಶೆ ಅಲ್ಲಿಂದ ಪಲಾಯನಮಾಡಿ ಮಿದ್ಯಾನರ ನಾಡಿನಲ್ಲಿ ಆಶ್ರಯ ಪಡೆದನು. ಅಲ್ಲಿರುವಾಗ ಅವನಿಗೆ ಇಬ್ಬರು ಗಂಡುಮಕ್ಕಳು ಹುಟ್ಟಿದರು.</verse>
				<verse number="30">“ನಾಲ್ವತ್ತು ವರ್ಷಗಳಾದ ಮೇಲೆ ಒಂದು ದಿನ ಸೀನಾಯಿ ಬೆಟ್ಟದ ಮರಳುಗಾಡಿನಲ್ಲಿ ಉರಿಯುತ್ತಿದ್ದ ಪೊದೆಯೊಂದನ್ನು ಮೋಶೆ ಕಂಡನು. ಅದರಲ್ಲಿ ಒಬ್ಬ ದೇವದೂತನು ಕಾಣಿಸಿಕೊಂಡನು.</verse>
				<verse number="31">ಇದನ್ನು ಕಂಡ ಮೋಶೆ ವಿಸ್ಮಿತನಾದನು. ಅದನ್ನು ಚೆನ್ನಾಗಿ ನೋಡಲೆಂದು ಹತ್ತಿರಕ್ಕೆ ಬಂದಾಗ,</verse>
				<verse number="32">‘ನಾನು ನಿನ್ನ ಪಿತೃಗಳ ದೇವರು; ಅಬ್ರಹಾಮ, ಇಸಾಕ ಮತ್ತು ಯಕೋಬನ ದೇವರು ಆಗಿದ್ದೇನೆ’ ಎಂದು ಸರ್ವೇಶ್ವರನ ವಾಣಿ ಉಂಟಾಯಿತು. ಆಗ ಮೋಶೆ ಗಡಗಡನೆ ನಡುಗಿದನು. ಕಣ್ಣೆತ್ತಿ ನೋಡಲು ಹಿಂಜರಿದನು.</verse>
				<verse number="33">ಸರ್ವೇಶ್ವರ ಅವನಿಗೆ, ‘ನಿನ್ನ ಪಾದರಕ್ಷೆಗಳನ್ನು ದೂರವಿಡು. ಏಕೆಂದರೆ ನೀನು ನಿಂತಿರುವ ಸ್ಥಳ ಪವಿತ್ರವಾದುದು.</verse>
				<verse number="34">ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆ ನನಗೆ ತಿಳಿದೇ ಇದೆ. ಅವರ ಗೋಳನ್ನು ಕೇಳಿ ಅವರನ್ನು ಬಿಡುಗಡೆಮಾಡಲು ಬಂದಿರುವೆನು. ಬಾ, ನಾನು ನಿನ್ನನ್ನು ಈಜಿಪ್ಟಿಗೆ ಕಳುಹಿಸುವೆನು,’ ಎಂದರು.</verse>
				<verse number="35">“ ‘ನಮ್ಮ ನ್ಯಾಯತೀರಿಸುವ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?’ ಎಂದು ಇಸ್ರಯೇಲರಿಂದ ತಿರಸ್ಕೃತನಾದವನೇ ಆ ಮೋಶೆ. ಉರಿಯುವ ಪೊದೆಯಲ್ಲಿ ಕಾಣಿಸಿಕೊಂಡ ತಮ್ಮ ದೂತನ ಮೂಲಕ ದೇವರು ಅಧಿಪತಿಯನ್ನಾಗಿಯೂ ವಿಮೋಚಕನನ್ನಾಗಿಯೂ ನೇಮಿಸಿದ್ದು ಇವನನ್ನೇ.</verse>
				<verse number="36">ಈಜಿಪ್ಟಿನಲ್ಲೂ ಕೆಂಪುಸಮುದ್ರದಲ್ಲೂ ನಲವತ್ತು ವರ್ಷಕಾಲ ಮರಳು ಬೆಂಗಾಡಿನಲ್ಲೂ ಅದ್ಭುತಗಳನ್ನು ಹಾಗೂ ಸೂಚಕಕಾರ್ಯಗಳನ್ನು ಮಾಡಿ ಇಸ್ರಯೇಲರನ್ನು ಬಿಡುಗಡೆಮಾಡಿದವನು ಇವನೇ.</verse>
				<verse number="37">‘ದೇವರು ನನ್ನನ್ನು ಕಳುಹಿಸಿದಂತೆ, ನಿಮ್ಮ ಜನಾಂಗದಿಂದಲೇ ಒಬ್ಬ ಪ್ರವಾದಿಯನ್ನು ಕಳುಹಿಸುವರು’ ಎಂದು ಇಸ್ರಯೇಲರಿಗೆ ತಿಳಿಸಿದವನು ಈ ಮೋಶೆಯೇ.</verse>
				<verse number="38">ಇಸ್ರಯೇಲರು ಮರಳುಗಾಡಿನಲ್ಲಿ ಸಭೆಸೇರಿದ್ದಾಗ, ಅವರ ಮಧ್ಯೆ ಇದ್ದು, ಸೀನಾಯಿ ಬೆಟ್ಟದಲ್ಲಿ ಮಾತನಾಡಿದ ದೇವದೂತನೊಡನೆಯೂ ನಮ್ಮ ಪಿತೃಗಳೊಡನೆಯೂ ಸಂಭಾಷಿಸಿದವನು ಇವನೇ. ನಮಗೀಯಲು ಜೀವೋಕ್ತಿಗಳನ್ನು ದೇವರಿಂದ ಪಡೆದವನು ಇವನೇ.</verse>
				<verse number="39">“ಆದರೆ ನಮ್ಮ ಪಿತೃಗಳು ಅವನಿಗೆ ವಿಧೇಯರಾಗಲು ನಿರಾಕರಿಸಿದರು. ಅವನನ್ನು ತಿರಸ್ಕರಿಸಿ ಈಜಿಪ್ಟ್ ದೇಶಕ್ಕೆ ಹಿಂದಿರುಗಲು ಮನಸ್ಸು ಮಾಡಿದರು.</verse>
				<verse number="40">ಅವರು ಆರೋನನಿಗೆ, ‘ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದ ಆ ಮೋಶೆಗೆ ಏನಾಯಿತೋ ತಿಳಿಯದು. ನಮಗೆ ಮುಂದಾಳಾಗಿ ಹೋಗಲು ಕೆಲವು ದೇವರುಗಳ ವಿಗ್ರಹಗಳನ್ನು ಮಾಡಿಕೊಡು,’ ಎಂದರು.</verse>
				<verse number="41">ಮಾತ್ರವಲ್ಲ, ಹೋರಿಕರುವಿನ ಆಕಾರದ ವಿಗ್ರಹವೊಂದನ್ನು ಮಾಡಿ ಅದಕ್ಕೆ ಬಲಿಯನ್ನು ಕೊಟ್ಟು, ತಮ್ಮ ಕೈಕೃತಿಗಳಿಗಾಗಿ ಮೆರೆದಾಡಿದರು.</verse>
				<verse number="42">ಆಗ ದೇವರು ಅವರಿಗೆ ವಿಮುಖರಾದರು. ಆಕಾಶದ ಗ್ರಹಗಳನ್ನೇ ಅವರು ಪೂಜಿಸಲೆಂದು ಬಿಟ್ಟುಬಿಟ್ಟರು. ಇದನ್ನು ಕುರಿತೇ ಪ್ರವಾದಿಗಳ ಗ್ರಂಥದಲ್ಲಿ: ‘ಓ ಇಸ್ರಯೇಲರೇ, ನೀವು ಮರಳುಗಾಡಿನಲ್ಲಿ ನಾಲ್ವತ್ತು ವರ್ಷಗಳಕಾಲ ದಹನಬಲಿಗಳನ್ನು ಅರ್ಪಿಸಿದ್ದು ನನಗಲ್ಲ.</verse>
				<verse number="43">ವಿಗ್ರಹಗಳನ್ನು ಮಾಡಿ ಪೂಜಿಸಿದಿರಿ; ಮೋಲೆಕ ದೇವರ ಗುಡಾರವನ್ನೂ ನಕ್ಷತ್ರಾಧಿಪತಿಯಾದ ರೇಫಾ ದೇವತೆಯ ಪ್ರತಿಮೆಯನ್ನೂ ಹೊತ್ತುಕೊಂಡು ಹೋದಿರಿ. ಆದುದರಿಂದ ನಾನು ನಿಮ್ಮನ್ನು ಬಾಬಿಲೋನಿನ ಆಚೆ ಗಡಿಪಾರುಮಾಡುತ್ತೇನೆ,’ ಎಂದು ಬರೆದಿದೆ.</verse>
				<verse number="44">“ದೇವಪ್ರಸನ್ನತೆಯ ಗುಡಾರವು ನಮ್ಮ ಪೂರ್ವಜರ ಬಳಿ ಮರಳುಗಾಡಿನಲ್ಲಿತ್ತು. ಮೋಶೆಯೊಡನೆ ಮಾತನಾಡಿದ ದೇವರು ಅವನಿಗಿತ್ತ ಆಜ್ಞೆಯಂತೆ ಹಾಗೂ ತೋರಿಸಿದ ಆಕಾರದಂತೆ ಅದನ್ನು ನಿರ್ಮಿಸಲಾಗಿತ್ತು.</verse>
				<verse number="45">ಅನಂತರ ಬಂದ ನಮ್ಮ ಪಿತೃಗಳು ಅದನ್ನು ಸ್ವಾಸ್ತ್ಯವಾಗಿ ಪಡೆದರು. ದೇವರು ಅನ್ಯಜನಾಂಗಗಳನ್ನು ಓಡಿಸಿ ಸ್ವಾಧೀನಮಾಡಿಕೊಟ್ಟ ನಾಡಿಗೆ, ಅವರು ಯೆಹೋಶುವನ ಮುಖಂಡತ್ವದಲ್ಲಿ ಹೋದಾಗ, ಆ ಗುಡಾರವನ್ನೂ ತೆಗೆದುಕೊಂಡು ಹೋದರು. ದಾವೀದನ ಕಾಲದವರೆಗೂ ಅದು ಅಲ್ಲೇ ಇತ್ತು.</verse>
				<verse number="46">ದೈವಾನುಗ್ರಹಕ್ಕೆ ಪಾತ್ರನಾದ ದಾವೀದನು ಯಕೋಬನ ದೇವರಿಗೆ ಆಲಯವೊಂದನ್ನು ಕಟ್ಟಲು ಅಪ್ಪಣೆಯಾಗಬೇಕೆಂದು ಬೇಡಿಕೊಂಡನು.</verse>
				<verse number="47">ಸಾಕ್ಷಾತ್ ಆ ಆಲಯವನ್ನು ಕಟ್ಟಿಸಿದವನು ಸೊಲೊಮೋನನು.</verse>
				<verse number="48">ಆದರೆ ಪರಾತ್ಪರ ದೇವರು ಮಾನವ ನಿರ್ಮಿತ ಆಲಯಗಳಲ್ಲಿ ಮನೆಮಾಡುವುದಿಲ್ಲ.</verse>
				<verse number="49">ಸ್ವರ್ಗವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಇಂತಿರಲು, ನನ್ನಂಥವನಿಗೆ ಎಂಥ ಆಲಯವನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವಾದರೂ ಯಾವುದು?</verse>
				<verse number="50">ಇವೆಲ್ಲವನ್ನೂ ನಿರ್ಮಿಸಿದವನು ನಾನೇ ಅಲ್ಲವೇ?’ ಎಂದು ಪ್ರಶ್ನಿಸುತ್ತಾರೆ ಸರ್ವೇಶ್ವರ, ಪ್ರವಾದಿಯ ಪ್ರವಚನವೊಂದರಲ್ಲಿ.”</verse>
				<verse number="51">ಸ್ತೇಫನನು ಮುಂದುವರೆದು, “ಎಷ್ಟು ಹಟಮಾರಿಗಳು ನೀವು; ಎಂಥಾ ಕಠಿಣ ಹೃದಯಿಗಳು ನೀವು’ ದೇವರ ಸಂದೇಶಕ್ಕೆ ಎಷ್ಟು ಕಿವುಡರು ನೀವು! ನಿಮ್ಮ ಪೂರ್ವಜರಂತೆ ನೀವು ಸಹ ಪವಿತ್ರಾತ್ಮ ಅವರನ್ನು ಯಾವಾಗಲೂ ಪ್ರತಿಭಟಿಸುತ್ತೀರಿ.</verse>
				<verse number="52">ನಿಮ್ಮ ಪೂರ್ವಜರು ಹಿಂಸೆಗೆ ಗುರಿಪಡಿಸದ ಪ್ರವಾದಿ ಯಾರಾದರೂ ಇದ್ದಾರೆಯೆ? ಸತ್ಯಸ್ವರೂಪನು ಬರಲಿದ್ದಾನೆಂದು ಮುಂತಿಳಿಸಿದವರನ್ನು ಅವರು ಕೊಂದುಹಾಕಿದರು. ನೀವಾದರೋ, ಆ ಸತ್ಯಸ್ವರೂಪನನ್ನು ಹಿಡಿದುಕೊಟ್ಟು ಕೊಲೆಮಾಡಿಸಿದಿರಿ.</verse>
				<verse number="53">ದೇವದೂತರ ಮೂಲಕ ಧರ್ಮಶಾಸ್ತ್ರವನ್ನು ಪಡೆದ ನೀವೇ ಅದಕ್ಕೆ ಅವಿಧೇಯರಾಗಿ ನಡೆದಿರಿ,” ಎಂದನು.</verse>
				<verse number="54">ಸ್ತೇಫನನ ಮಾತುಗಳನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಅವನ ಮೇಲೆ ಕೋಪೋದ್ರಿಕ್ತರಾದರು. ಕಟಕಟನೆ ಹಲ್ಲುಕಡಿದರು.</verse>
				<verse number="55">ಆದರೆ ಸ್ತೇಫನನು ಪವಿತ್ರಾತ್ಮಭರಿತನಾಗಿ ಸ್ವರ್ಗದತ್ತ ಕಣ್ಣೆತ್ತಿನೋಡಿ ದೇವರ ಮಹಿಮೆಯನ್ನೂ ಅವರ ಬಲಪಾರ್ಶ್ವದಲ್ಲಿ ನಿಂತಿರುವ ಯೇಸುವನ್ನೂ ಕಂಡು,</verse>
				<verse number="56">“ಇಗೋ, ಆಕಾಶವು ತೆರೆದಿದೆ, ನರಪುತ್ರನು ದೇವರ ಬಲಪಾರ್ಶ್ವದಲ್ಲಿ ನಿಂತಿರುವುದನ್ನು ನಾನು ನೋಡುತ್ತಿದ್ದೇನೆ,” ಎಂದನು.</verse>
				<verse number="57">ಇದನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಆರ್ಭಟಿಸಿದರು; ಕಿವಿಗಳನ್ನು ಮುಚ್ಚಿಕೊಂಡರು; ಭರದಿಂದ ಅವನತ್ತ ಧಾವಿಸಿದರು.</verse>
				<verse number="58">ಪಟ್ಟಣದಿಂದ ಹೊರಕ್ಕೆ ದಬ್ಬಿ ಅವನ ಮೇಲೆ ಕಲ್ಲು ತೂರಿದರು. ಸಾಕ್ಷಿಕೊಟ್ಟವರು ತಮ್ಮ ಬಟ್ಟೆಬರೆಗಳನ್ನು ತರುಣ ಸೌಲನ ವಶದಲ್ಲಿ ಇಟ್ಟಿದ್ದರು.</verse>
				<verse number="59">ಅವರು ತನ್ನ ಮೇಲೆ ಕಲ್ಲುಬೀರುತ್ತಿದ್ದಾಗ ಸ್ತೇಫನನು, “ಪ್ರಭು ಯೇಸುವೇ, ನನ್ನಾತ್ಮವನ್ನು ಸ್ವೀಕರಿಸಿ,” ಎಂದು ಪ್ರಾರ್ಥಿಸಿದನು.</verse>
				<verse number="60">ಅನಂತರ ಮೊಣಕಾಲೂರಿ, “ಪ್ರಭೂ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡಿ,” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು. ಸೌಲನು ಸ್ತೇಫನನ ಕೊಲೆಗೆ ಸಮ್ಮತಿಸಿದ್ದನು.</verse>
			</chapter>
			<chapter number="8">
				<verse number="1">ಆ ದಿನವೇ ಜೆರುಸಲೇಮಿನ ಧರ್ಮಸಭೆಯ ವಿರುದ್ಧ ಕ್ರೂರ ಹಿಂಸೆ ಪ್ರಾರಂಭ ಆಯಿತು. ಪ್ರೇಷಿತರ ಹೊರತು ಇತರ ಭಕ್ತವಿಶ್ವಾಸಿಗಳು ಜುದೇಯ ಮತ್ತು ಸಮಾರಿಯ ಪ್ರಾಂತ್ಯಗಳಲ್ಲೆಲ್ಲಾ ಚದರಿಹೋದರು.</verse>
				<verse number="2">ಕೆಲವು ಭಕ್ತಾಧಿಗಳು ಸ್ತೇಫನನನ್ನು ಸಮಾಧಿಮಾಡಿ ಅವನಿಗಾಗಿ ಅತ್ತು ಗೋಳಾಡಿದರು.</verse>
				<verse number="3">ಇತ್ತ ಸೌಲನು ಧರ್ಮಸಭೆಯನ್ನು ನಾಶಪಡಿಸಲು ತೊಡಗಿದನು; ಮನೆಮನೆಗೂ ನುಗ್ಗಿ ಸ್ತ್ರೀಪುರುಷರೆನ್ನದೆ ಭಕ್ತರನ್ನು ಎಳೆದುತಂದು ಸೆರೆಮನೆಗೆ ತಳ್ಳುತ್ತಿದ್ದನು.</verse>
				<verse number="4">ಚದರಿಹೋದ ಭಕ್ತವಿಶ್ವಾಸಿಗಳು ಎಲ್ಲೆಲ್ಲೂ ಹೋಗಿ ಶುಭಸಂದೇಶವನ್ನು ಸಾರುತ್ತಿದ್ದರು.</verse>
				<verse number="5">ಫಿಲಿಪ್ಪನು ಸಮಾರಿಯದ ಪ್ರಮುಖ ಪಟ್ಟಣ ಒಂದಕ್ಕೆ ಹೋಗಿ ಅಲ್ಲಿಯ ಜನರಿಗೆ ಯೇಸುವೇ ಅಭಿಷಿಕ್ತನಾದ ಲೋಕೋದ್ಧಾರಕನೆಂದು ಸಾರಿದನು.</verse>
				<verse number="6">ಜನಸಮೂಹವು ಅವನಿಗೆ ಕಿವಿಕೊಟ್ಟಿತು. ಅವನು ಮಾಡಿದ ಅದ್ಭುತಕಾರ್ಯಗಳನ್ನು ಕಣ್ಣಾರೆ ಕಂಡಿತು; ಅವನ ಬೋಧನೆಯನ್ನು ಒಮ್ಮನಸ್ಸಿನಿಂದ ಸ್ವೀಕರಿಸಿತು.</verse>
				<verse number="7">ಅನೇಕರನ್ನು ಹಿಡಿದಿದ್ದ ದೆವ್ವಗಳು ಅಬ್ಬರಿಸುತ್ತಾ ಅವರನ್ನು ಬಿಟ್ಟಗಲಿದವು; ಪಾರ್ಶ್ವವಾಯು ಪೀಡಿತರೂ ಕುಂಟರೂ ಸ್ವಸ್ಥರಾದರು.</verse>
				<verse number="8">ಇದರಿಂದ ಆ ಪಟ್ಟಣದಲ್ಲಿ ಉಂಟಾದ ಸಂತೋಷಕ್ಕೆ ಎಲ್ಲೆಯೇ ಇರಲಿಲ್ಲ.</verse>
				<verse number="9">ಆ ಪಟ್ಟಣದಲ್ಲಿ ಆಗ ಸಿಮೋನನೆಂಬ ಒಬ್ಬ ಮಂತ್ರವಾದಿ ಇದ್ದನು. ಅವನು ಸಮಾರಿಯದ ಜನತೆಯನ್ನು ತನ್ನ ಮಾಯಮಂತ್ರಗಳಿಂದ ಮಂಕುಗೊಳಿಸಿದ್ದನು. ತಾನೊಬ್ಬ ಮಹಾಪುರುಷನೆಂದು ಕೊಚ್ಚಿಕೊಳ್ಳುತ್ತಿದ್ದನು.</verse>
				<verse number="10">ಆ ಪಟ್ಟಣದವರೆಲ್ಲರೂ ಹಿರಿಯರು ಕಿರಿಯರು ಎನ್ನದೆ, ಅವನ ಮಾತಿಗೆ ಕಾತರದಿಂದ ಕಿವಿಗೊಡುತ್ತಿದ್ದರು. ‘ದೇವರ ಮಹಾಶಕ್ತಿ’ ಇವನೇ ಎಂದುಕೊಳ್ಳುತ್ತಿದ್ದರು.</verse>
				<verse number="11">ಬಹುಕಾಲದಿಂದ ಇವನ ಮಂತ್ರತಂತ್ರಗಳಿಗೆ ಮಾರುಹೋಗಿದ್ದ ಜನರು ಇವನ ಮಾತಿಗೆ ಬೆಲೆಕೊಡುತ್ತಿದ್ದರು.</verse>
				<verse number="12">ಆದರೆ ಫಿಲಿಪ್ಪನು ದೇವರ ಸಾಮ್ರಾಜ್ಯ ಹಾಗೂ ಯೇಸುಕ್ರಿಸ್ತರ ಶುಭಸಂದೇಶವನ್ನು ಬೋಧಿಸಿದಾಗ ಅದರಲ್ಲಿ ವಿಶ್ವಾಸತಳೆದರು. ಸ್ತ್ರೀಪುರುಷರೆನ್ನದೆ ದೀಕ್ಷಾಸ್ನಾನವನ್ನು ಪಡೆದರು.</verse>
				<verse number="13">ಸಿಮೋನನು ಕೂಡ ವಿಶ್ವಾಸವಿಟ್ಟನು. ದೀಕ್ಷಾಸ್ನಾನವನ್ನು ಪಡೆದು ಫಿಲಿಪ್ಪನ ಸಂಗಡಿಗನಾದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಕಂಡು ಬೆಕ್ಕಸಬೆರಗಾದನು.</verse>
				<verse number="14">ಸಮಾರಿಯದ ಜನರು ದೇವರ ವಾಕ್ಯವನ್ನು ಸ್ವೀಕರಿಸಿದ ಸಮಾಚಾರ ಪ್ರೇಷಿತರಿಗೆ ಮುಟ್ಟಿತು. ಅವರು ಪೇತ್ರ ಮತ್ತು ಯೊವಾನ್ನರನ್ನು ಅಲ್ಲಿಗೆ ಕಳುಹಿಸಿದರು.</verse>
				<verse number="15">ಇವರು ಬಂದು ಆ ಜನರು ಪವಿತ್ರಾತ್ಮ ಅವರ ವರವನ್ನು ಪಡೆಯಲೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು.</verse>
				<verse number="16">ಏಕೆಂದರೆ, ಅವರು ಪ್ರಭು ಯೇಸುವಿನ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆದಿದ್ದರೇ ಹೊರತು ಅವರಲ್ಲಿ ಯಾರ ಮೇಲೂ ಆ ವರವು ಬಂದಿರಲಿಲ್ಲ.</verse>
				<verse number="17">ಪ್ರೇಷಿತರು ಅವರ ಮೇಲೆ ಹಸ್ತನಿಕ್ಷೇಪ ಮಾಡಲು ಅವರು ಪವಿತ್ರಾತ್ಮ ವರವನ್ನು ಪಡೆದರು.</verse>
				<verse number="18">ಪ್ರೇಷಿತರು ಹಸ್ತನಿಕ್ಷೇಪ ಮಾಡಿದಾಗ ಭಕ್ತರಿಗೆ ಪವಿತ್ರಾತ್ಮ ಪ್ರಧಾನವಾಗುವುದನ್ನು ಸಿಮೋನನು ಕಂಡನು. ಪೇತ್ರ ಮತ್ತು ಯೊವಾನ್ನರಿಗೆ ಹಣವನ್ನು ನೀಡುತ್ತಾ,</verse>
				<verse number="19">“ನಾನೂ ಸಹ ಯಾರ ಮೇಲೆ ಕೈಯಿಟ್ಟರೂ ಅವರು ಪವಿತ್ರಾತ್ಮ ಅವರ ವರವನ್ನು ಹೊಂದುವಂತಹ ಶಕ್ತಿಯನ್ನು ನನಗೂ ಕೊಡಿ,” ಎಂದು ಕೇಳಿಕೊಂಡನು.</verse>
				<verse number="20">ಅದಕ್ಕೆ ಪೇತ್ರನು, “ನಿನ್ನ ಹಣಕಾಸು ನಿನ್ನೊಂದಿಗೆ ಹಾಳಾಗಿಹೋಗಲಿ; ದೇವರ ವರವನ್ನು ಹಣಕ್ಕೆ ಕೊಳ್ಳಬೇಕೆಂದಿರುವೆಯಾ?</verse>
				<verse number="21">ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ. ದೇವರ ದೃಷ್ಟಿಯಲ್ಲಿ ನಿನ್ನ ಹೃದಯವು ಸರಿಯಿಲ್ಲ.</verse>
				<verse number="22">ನಿನ್ನ ದುರಾಲೋಚನೆಗಾಗಿ ಪಶ್ಚಾತ್ತಾಪಪಡು; ನಿನ್ನ ದುರುದ್ದೇಶವನ್ನು ಕ್ಷಮಿಸಲೆಂದು ಪ್ರಭುವನ್ನು ಪ್ರಾರ್ಥಿಸು; ಅವರು ಕ್ಷಮಿಸಬಹುದು.</verse>
				<verse number="23">ನೀನು ದ್ವೇಷಾಸೂಯೆಯಿಂದ ತುಂಬಿರುವೆ; ಪಾಪಕ್ಕೆ ದಾಸನಾಗಿರುವೆ,” ಎಂದನು.</verse>
				<verse number="24">ಆಗ ಸಿಮೋನನು, “ನೀವು ಹೇಳಿದ ಯಾವ ಕೇಡೂ ನನಗೆ ತಗಲದಂತೆ ನನಗಾಗಿ ನೀವೇ ಪ್ರಭುವಿನಲ್ಲಿ ಪ್ರಾರ್ಥನೆಮಾಡಿ,” ಎಂದು ಬೇಡಿಕೊಂಡನು.</verse>
				<verse number="25">ಪ್ರೇಷಿತರು ದೇವರ ವಾಕ್ಯವನ್ನು ಸಾಕ್ಷ್ಯಪೂರಿತವಾಗಿ ಬೋಧಿಸಿದ ಮೇಲೆ ಜೆರುಸಲೇಮಿಗೆ ಮರಳಿದರು. ದಾರಿಯಲ್ಲಿ ಅವರು ಸಮಾರಿಯದ ಅನೇಕ ಹಳ್ಳಿಗಳಲ್ಲೂ ಶುಭಸಂದೇಶವನ್ನು ಸಾರಿದರು.</verse>
				<verse number="26">ಅನಂತರ ದೇವದೂತನು ಫಿಲಿಪ್ಪನಿಗೆ, “ನೀನು ಎದ್ದು ದಕ್ಷಿಣಾಭಿಮುಖವಾಗಿ ಹೋಗು. ಅದು ಜೆರುಸಲೇಮಿನಿಂದ ಗಾಜಕ್ಕೆ ಹೋಗುವ ಅರಣ್ಯ ಮಾರ್ಗ,” ಎಂದನು.</verse>
				<verse number="27">ಅಂತೆಯೇ ಫಿಲಿಪ್ಪನು ಹೊರಟನು. ಆಗ ಇಥಿಯೋಪಿಯದ ಕಂಚುಕಿಯೊಬ್ಬನು ಅದೇ ಮಾರ್ಗವಾಗಿ ಬರುತ್ತಿದ್ದನು. ಅವನು ಆ ದೇಶದ ರಾಣಿ ಕಂದಾಕಿಯ ಕೋಶಾಧಿಕಾರಿ ಹಾಗೂ ಸಚಿವ. ದೇವಾರಾಧನೆಗೆಂದು ಜೆರುಸಲೇಮಿಗೆ ಹೋಗಿ ಹಿಂದಿರುಗುತ್ತಿದ್ದನು. ಅವನು ತನ್ನ ರಥದಲ್ಲಿ ಕುಳಿತು ಯೆಶಾಯನ ಪ್ರವಾದನೆಯನ್ನು ಓದುತ್ತಿದ್ದನು.</verse>
				<verse number="28"></verse>
				<verse number="29">ಪವಿತ್ರಾತ್ಮರು ಫಿಲಿಪ್ಪನಿಗೆ, “ನೀನು ಮುಂದೆ ಹೋಗಿ ಆ ರಥದ ಜೊತೆಯಲ್ಲೇ ನಡೆ,” ಎಂದು ತಿಳಿಸಿದರು.</verse>
				<verse number="30">ಫಿಲಿಪ್ಪನು ಮುಂದಕ್ಕೆ ಧಾವಿಸಿ, ಅವನು ಯೆಶಾಯನ ಪ್ರವಾದನೆಯನ್ನು ಓದುತ್ತಿರುವುದನ್ನು ಕೇಳಿಸಿಕೊಂಡನು. “ನೀವು ಓದುತ್ತಿರುವುದು ಅರ್ಥವಾಗುತ್ತಿದೆಯೇ?” ಎಂದು ಪ್ರಶ್ನಿಸಿದನು.</verse>
				<verse number="31">ಆ ಅಧಿಕಾರಿ ಪ್ರತ್ಯುತ್ತರವಾಗಿ, “ಯಾರಾದರೂ ವಿವರಿಸಿದ ಹೊರತು ಇದು ನನಗೆ ಅರ್ಥವಾಗುವುದಾದರೂ ಹೇಗೆ?” ಎಂದನು. ರಥವನ್ನು ಹತ್ತಿ ಕುಳಿತುಕೊಳ್ಳುವಂತೆ ಫಿಲಿಪ್ಪನನ್ನು ಆಹ್ವಾನಿಸಿದನು.</verse>
				<verse number="32">ಅವನು ಓದುತ್ತಿದ್ದ ಪ್ರವಾದನೆ ಇದು: “ವಧ್ಯಸ್ಥಾನಕ್ಕೆ ಒಯ್ದ ಕುರಿಯಂತೆ ತುಪ್ಪಟ ಕತ್ತರಿಸುವವನ ಮುಂದಿರುವ ಮೂಕ ಕುರಿಮರಿಯಂತೆ ಆತನು ಬಾಯ್ದೆರೆಯಲಿಲ್ಲ.</verse>
				<verse number="33">ಆತನನ್ನು ಅವಮಾನಪಡಿಸಲಾಯಿತು ನ್ಯಾಯವನ್ನೇ ಆತನಿಗೆ ನಿರಾಕರಿಸಲಾಯಿತು ಆತನ ಸಂತತಿಯ ಮಾತೇ ಎತ್ತದಂತಾಯಿತು. ಇದಕಾರಣ ಆತನ ಭೌತಿಕಜೀವವನ್ನೇ ಮೊಟಕುಗೊಳಿಸಲಾಯಿತು.”</verse>
				<verse number="34">ಆ ಅಧಿಕಾರಿ ಫಿಲಿಪ್ಪನಿಗೆ, “ಇಲ್ಲಿ ಪ್ರವಾದಿ ಯಾರನ್ನು ಕುರಿತು ಈ ಮಾತುಗಳನ್ನು ಹೇಳಿದ್ದಾನೆ ತನ್ನನ್ನು ಕುರಿತೋ ಅಥವಾ ಬೇರೆಯವರನ್ನು ಕುರಿತೋ, ಹೇಳಬಲ್ಲೆಯಾ?’ ಎಂದು ಕೇಳಿದನು.</verse>
				<verse number="35">ಆಗ ಫಿಲಿಪ್ಪನು ಮರುತ್ತರವಾಗಿ, ಆ ಪ್ರವಾದನೆಯನ್ನೇ ಆಧಾರವಾಗಿ ತೆಗೆದುಕೊಂಡು, ಯೇಸುವಿನ ಶುಭಸಂದೇಶವನ್ನು ಅವನಿಗೆ ಬೋಧಿಸಿದನು.</verse>
				<verse number="36">ಅವರು ಪ್ರಯಾಣ ಮಾಡುತ್ತಾ ದಾರಿಯಲ್ಲಿ ನೀರಿದ್ದ ಒಂದು ಸ್ಥಳಕ್ಕೆ ಬಂದರು. ಅದನ್ನು ಕಂಡ ಆ ಅಧಿಕಾರಿ, “ಇಲ್ಲಿ ನೀರಿದೆ. ನಾನು ದೀಕ್ಷಾಸ್ನಾನವನ್ನು ಪಡೆಯಲು ಏನಾದರೂ ಅಭ್ಯಂತರವಿದೆಯೇ?” ಎಂದನು.</verse>
				<verse number="37">(ಫಿಲಿಪ್ಪನು, “ನೀವು ಹೃದಯಪೂರ್ವಕವಾಗಿ ವಿಶ್ವಾಸಿಸುವುದಾದರೆ ದೀಕ್ಷಾಸ್ನಾನವನ್ನು ಪಡೆಯಬಹುದು,” ಎಂದನು. “ಯೇಸುಕ್ರಿಸ್ತ ದೇವರ ಪುತ್ರ ಎಂದು ನಾನು ವಿಶ್ವಾಸಿಸುತ್ತೇನೆ,” ಎಂದು ಅಧಿಕಾರಿ ಪ್ರತ್ಯುತ್ತರವಿತ್ತನು).</verse>
				<verse number="38">ಅಧಿಕಾರಿಯ ಆಜ್ಞೆಯಂತೆ ರಥವನ್ನು ಅಲ್ಲಿಯೇ ನಿಲ್ಲಿಸಲಾಯಿತು. ಅವರಿಬ್ಬರೂ ನೀರಿಗೆ ಇಳಿದರು. ಫಿಲಿಪ್ಪನು ಅಧಿಕಾರಿಗೆ ದೀಕ್ಷಾಸ್ನಾನವನ್ನು ಕೊಟ್ಟನು.</verse>
				<verse number="39">ಅವರಿಬ್ಬರು ನೀರಿನಿಂದ ಮೇಲಕ್ಕೆ ಬಂದೊಡನೆ ಪ್ರಭುವಿನ ಆತ್ಮವು ಫಿಲಿಪ್ಪನನ್ನು ಅಲ್ಲಿಂದ ಕೊಂಡೊಯ್ಯಿತು. ಆ ಅಧಿಕಾರಿ ಫಿಲಿಪ್ಪನನ್ನು ಪುನಃ ಕಾಣಲಿಲ್ಲ; ಅವನು ಸಂತೋಷಭರಿತನಾಗಿ ಪ್ರಯಾಣವನ್ನು ಮುಂದುವರಿಸಿದನು.</verse>
				<verse number="40">ಫಿಲಿಪ್ಪನಾದರೋ ಆಜೋತ್ ಎಂಬಲ್ಲಿ ಕಾಣಿಸಿಕೊಂಡನು. ಅಲ್ಲಿಂದ ಸೆಜರೇಯವನ್ನು ತಲುಪುವವರೆಗೆ ಎಲ್ಲಾ ಊರುಗಳಲ್ಲೂ ಶುಭಸಂದೇಶವನ್ನು ಸಾರುತ್ತಾ ಹೋದನು.</verse>
			</chapter>
			<chapter number="9">
				<verse number="1">ಇತ್ತ ಸೌಲನು ಯೇಸುಸ್ವಾಮಿಯ ಅನುಯಾಯಿಗಳಿಗೆ ಬೆದರಿಕೆ ಹಾಕುತ್ತಾ ಅವರನ್ನು ಸಂಹರಿಸಬೇಕೆಂದಿದ್ದನು.</verse>
				<verse number="2">ಈ ಹೊಸ ಮಾರ್ಗವನ್ನು ಅವಲಂಬಿಸುವವರು ಹೆಂಗಸರೇ ಆಗಿರಲಿ, ಗಂಡಸರೇ ಆಗಿರಲಿ, ದಮಸ್ಕಸಿನಲ್ಲಿದ್ದರೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದು ತರಬೇಕೆಂದಿದ್ದನು. ಇದಕ್ಕೆ ಬೇಕಾದ ಪತ್ರಗಳನ್ನು ಕೇಳುವುದಕ್ಕಾಗಿ ಪ್ರಧಾನಯಾಜಕನ ಬಳಿಗೆ ಹೋದನು. ದಮಸ್ಕಸಿನಲ್ಲಿರುವ ಪ್ರಾರ್ಥನಾಮಂದಿರದ ಅಧಿಕಾರಿಗಳಿಗೆ ತೋರಿಸಲು ಆ ಪತ್ರಗಳನ್ನು ಪಡೆದನು.</verse>
				<verse number="3">ಅವನು ಅಲ್ಲಿಂದ ಪ್ರಯಾಣಮಾಡುತ್ತಾ ದಮಸ್ಕಸ್ ಪಟ್ಟಣವನ್ನು ಸಮೀಪಿಸಿದನು. ಇದ್ದಕ್ಕಿದ್ದಂತೆ ಆಕಾಶದಿಂದ ಬೆಳಕೊಂದು ಮಿಂಚಿ ಅವನ ಸುತ್ತಲೂ ಆವರಿಸಿತು.</verse>
				<verse number="4">ಅವನು ನೆಲಕ್ಕುರುಳಿದನು. “ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿ ಅವನಿಗೆ ಕೇಳಿಸಿತು.</verse>
				<verse number="5">ಆಗ ಅವನು, “ಪ್ರಭೂ, ನೀವಾರು?” ಎಂದನು. “ನೀನು ಹಿಂಸೆಪಡಿಸುತ್ತ ಇರುವ ಯೇಸುವೇ ನಾನು.</verse>
				<verse number="6">ನೀನೆದ್ದು ಪಟ್ಟಣಕ್ಕೆ ಹೋಗು, ಏನು ಮಾಡಬೇಕೆಂದು ನಿನಗೆ ಅಲ್ಲಿ ತಿಳಿಸಲಾಗುವುದು,” ಎಂದು ಆ ವಾಣಿ ಹೇಳಿತು.</verse>
				<verse number="7">ಸೌಲನೊಡನೆ ಪ್ರಯಾಣ ಮಾಡುತ್ತಿದ್ದವರಿಗೆ ಆ ವಾಣಿ ಕೇಳಿಸಿತೇ ಹೊರತು, ಯಾರೂ ಕಾಣಿಸಲಿಲ್ಲ. ಅವರು ಸ್ತಬ್ಧರಾದರು.</verse>
				<verse number="8">ಸೌಲನು ಮೇಲಕ್ಕೆದ್ದು ಕಣ್ಣರಳಿಸಿ ನೋಡಿದರೂ ಅವನಿಗೇನೂ ಕಾಣಿಸಲಿಲ್ಲ. ಆದುದರಿಂದ ಸಂಗಡಿಗರು ಅವನ ಕೈಹಿಡಿದು ದಮಸ್ಕಸ್ ಪಟ್ಟಣಕ್ಕೆ ಕರೆದುಕೊಂಡು ಹೋದರು.</verse>
				<verse number="9">ಮೂರು ದಿನಗಳವರೆಗೂ ಅವನಿಗೆ ಕಣ್ಣು ಕಾಣಿಸಲಿಲ್ಲ. ಅಲ್ಲದೆ ಅದುವರೆಗೂ ಅವನು ಅನ್ನಪಾನಗಳನ್ನು ಮುಟ್ಟಲಿಲ್ಲ.</verse>
				<verse number="10">ದಮಸ್ಕಸಿನಲ್ಲಿ ಅನನೀಯ ಎಂಬ ಶಿಷ್ಯನಿದ್ದನು. ಪ್ರಭು ಅವನಿಗೆ ದರ್ಶನವಿತ್ತು, “ಅನನೀಯಾ” ಎಂದು ಕರೆಯಲು ಅವನು, “ಸ್ವಾಮೀ, ಅಪ್ಪಣೆಯಾಗಲಿ,” ಎಂದನು.</verse>
				<verse number="11">ಪ್ರಭು ಅವನಿಗೆ, “ನೀನೆದ್ದು ‘ನೇರಬೀದಿ’ ಎಂಬ ಹಾದಿಗೆ ಹೋಗು; ತಾರ್ಸದ ಸೌಲ ಎಂಬ ವ್ಯಕ್ತಿಗಾಗಿ ಯೂದನ ಮನೆಯಲ್ಲಿ ವಿಚಾರಿಸು. ಆ ಸೌಲನು ಪ್ರಾರ್ಥನೆಯಲ್ಲಿರುವುದನ್ನು ಕಾಣುವೆ.</verse>
				<verse number="12">ಅಲ್ಲದೆ ಅನನೀಯ ಎಂಬವನು ತನ್ನ ಬಳಿಗೆ ಬಂದು ತಾನು ಮರಳಿ ದೃಷ್ಟಿಯನ್ನು ಪಡೆಯುವಂತೆ ತನ್ನ ಮೇಲೆ ಹಸ್ತನಿಕ್ಷೇಪ ಮಾಡುವುದನ್ನು ದರ್ಶನದಲ್ಲಿ ಕಂಡಿದ್ದಾನೆ,” ಎಂದರು.</verse>
				<verse number="13">ಅನನೀಯ ಪ್ರತ್ಯುತ್ತರವಾಗಿ, “ಪ್ರಭೂ, ಈ ಮನುಷ್ಯ ಜೆರುಸಲೇಮಿನಲ್ಲಿ ತಮ್ಮ ಭಕ್ತರಿಗೆ ಎಷ್ಟು ಕೇಡುಮಾಡಿದ್ದಾನೆಂಬುದನ್ನು ಅನೇಕರ ಬಾಯಿಂದ ಕೇಳಿದ್ದೇನೆ.</verse>
				<verse number="14">ಅಷ್ಟುಮಾತ್ರವಲ್ಲ, ತಮ್ಮ ನಾಮಸ್ಮರಣೆ ಮಾಡುವವರೆಲ್ಲರನ್ನು ಬಂಧಿಸಲು ಮುಖ್ಯಯಾಜಕರಿಂದ ಅಧಿಕಾರವನ್ನು ಪಡೆದು ಇಲ್ಲಿಗೆ ಬಂದಿದ್ದಾನೆ,” ಎಂದನು.</verse>
				<verse number="15">ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು.</verse>
				<verse number="16">ಅವನು ನನ್ನ ನಾಮದ ನಿಮಿತ್ತ ಎಷ್ಟು ಕಷ್ಟಕಾರ್ಪಣ್ಯಗಳನ್ನು ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುತ್ತೇನೆ,” ಎಂದರು.</verse>
				<verse number="17">ಅಂತೆಯೇ ಅನನೀಯನು ಹೊರಟು ಆ ಮನೆಗೆ ಹೋದನು. ಸೌಲನ ಮೇಲೆ ಹಸ್ತನಿಕ್ಷೇಪಮಾಡಿ, “ಸಹೋದರ ಸೌಲನೇ, ಪ್ರಭು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆ. ನೀನು ಬರುವಾಗ ದಾರಿಯಲ್ಲಿ ಕಾಣಿಸಿಕೊಂಡ ಯೇಸುಸ್ವಾಮಿಯೇ, ನೀನು ದೃಷ್ಟಿಯನ್ನು ಮರಳಿ ಪಡೆಯುವಂತೆಯೂ ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದನು.</verse>
				<verse number="18">ಆ ಕ್ಷಣವೇ ಸೌಲನ ಕಣ್ಣುಗಳಿಂದ ಪರೆಯೊಂದು ಕಳಚಿಬಿದ್ದಿತು. ಅವನಿಗೆ ಪುನಃ ಕಣ್ಣು ಕಾಣತೊಡಗಿತು. ಎದ್ದು ದೀಕ್ಷಾಸ್ನಾನವನ್ನು ಪಡೆದನು.</verse>
				<verse number="19">ತರುವಾಯ ಊಟಮಾಡಿದ ಮೇಲೆ ಅವನಿಗೆ ತ್ರಾಣ ಬಂದಿತು. ಸೌಲನು ಕೆಲವು ದಿನಗಳವರೆಗೆ ದಮಸ್ಕಸಿನಲ್ಲಿ ಭಕ್ತವಿಶ್ವಾಸಿಗಳೊಡನೆ ಇದ್ದನು.</verse>
				<verse number="20">ಅನಂತರ ಸೌಲನು ತಡಮಾಡದೆ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಯೇಸುವೇ ‘ದೇವರ ಪುತ್ರ’ ಎಂದು ಬೋಧಿಸಲು ಆರಂಭಿಸಿದನು.</verse>
				<verse number="21">ಅವನ ಬೋಧನೆಯನ್ನು ಕೇಳಿದವರೆಲ್ಲರೂ ಚಕಿತರಾದರು. “ಜೆರುಸಲೇಮಿನಲ್ಲಿ ಯೇಸುವಿನ ನಾಮಸ್ಮರಣೆ ಮಾಡುತ್ತಿದ್ದವರನ್ನು ಬಲಿಹಾಕುತ್ತಿದ್ದವನು ಇವನೇ ಅಲ್ಲವೇ? ಅಂಥವರನ್ನು ಬಂಧಿಸಿ ಮುಖ್ಯಯಾಜಕರ ಬಳಿಗೆ ಎಳೆದೊಯ್ಯುವ ಉದ್ದೇಶದಿಂದಲೇ ಅಲ್ಲವೆ ಇವನು ಇಲ್ಲಿಗೆ ಬಂದಿರುವುದು?” ಎಂದು ಪ್ರಶ್ನಿಸತೊಡಗಿದರು.</verse>
				<verse number="22">ಸೌಲನಾದರೋ ಮತ್ತಷ್ಟು ಸಾಮರ್ಥ್ಯದಿಂದ ಪ್ರಭು ಯೇಸುವೇ ಲೋಕೋದ್ಧಾರಕನೆಂದು ರುಜುವಾತುಪಡಿಸಿ ದಮಸ್ಕಸಿನ ಯೆಹೂದ್ಯರ ಬಾಯಿಮುಚ್ಚಿಸಿದನು.</verse>
				<verse number="23">ಕೆಲವು ದಿನಗಳಾದ ಮೇಲೆ, ಯೆಹೂದ್ಯರು ಸೌಲನನ್ನು ಕೊಲ್ಲಲು ಒಳಸಂಚು ಮಾಡಿದರು.</verse>
				<verse number="24">ಅದು ಸೌಲನಿಗೆ ತಿಳಿದುಬಂದಿತು. ಅವರು ಅವನನ್ನು ಕೊಲ್ಲಲು ಹಗಲಿರುಳು ಪಟ್ಟಣದ ದ್ವಾರಗಳನ್ನು ಕಾಯುತ್ತಿದ್ದರು.</verse>
				<verse number="25">ಒಂದು ರಾತ್ರಿ ಸೌಲನ ಶಿಷ್ಯರು ಅವನನ್ನು ಕರೆದುಕೊಂಡು ಹೋಗಿ ಗೂಡೆಯೊಂದರಲ್ಲಿ ಕೂರಿಸಿ ಗೋಡೆಯ ಮೇಲಿಂದ ಕೆಳಕ್ಕೆ ಇಳಿಸಿದರು.</verse>
				<verse number="26">ಸೌಲನು ಜೆರುಸಲೇಮಿಗೆ ಬಂದು ಭಕ್ತವಿಶ್ವಾಸಿಗಳನ್ನು ಸೇರಲು ಪ್ರಯತ್ನಿಸಿದನು. ಆದರೆ, ಅವರು ಅವನು ಸಹ ಒಬ್ಬ ಭಕ್ತನೆಂದು ನಂಬದೆ ಅವನಿಗೆ ಭಯಪಟ್ಟರು.</verse>
				<verse number="27">ಆಗ ಬಾರ್ನಬನು ಅವನನ್ನು ಪ್ರೇಷಿತರ ಬಳಿಗೆ ಕರೆದುಕೊಂಡು ಹೋದನು. ಸೌಲನು ಪ್ರಭುವನ್ನು ಮಾರ್ಗದಲ್ಲಿ ದರ್ಶಿಸಿದ್ದನ್ನೂ ಅವರು ಅವನೊಂದಿಗೆ ಮಾತನಾಡಿದ್ದನ್ನೂ ತಿಳಿಸಿದನು. ಅಲ್ಲದೆ ದಮಸ್ಕಸಿನಲ್ಲಿ ಧೈರ್ಯದಿಂದ ಯೇಸುವಿನ ಹೆಸರಿನಲ್ಲಿ ಬೋಧಿಸಿದ್ದನ್ನೂ ಅವರಿಗೆ ವಿವರಿಸಿದನು.</verse>
				<verse number="28">ಅಂದಿನಿಂದ ಸೌಲನು ಜೆರುಸಲೇಮಿನಲ್ಲಿ ಅವರೊಡನೆ ಕಲೆತು ಪ್ರಭುವಿನ ಹೆಸರಿನಲ್ಲಿ ನಿರ್ಭಯವಾಗಿ ಬೋಧಿಸುತ್ತಿದ್ದನು.</verse>
				<verse number="29">ಗ್ರೀಕ್ ಮಾತನಾಡುತ್ತಿದ್ದ ಯೆಹೂದ್ಯರೊಡನೆ ಸಂಭಾಷಿಸುತ್ತಾ ಅವರ ವಿರುದ್ಧ ವಾದಿಸುತ್ತಿದ್ದನು. ಅವರಾದರೋ ಅವನನ್ನು ಕೊಲ್ಲಲು ಹವಣಿಸಿದರು.</verse>
				<verse number="30">ಇದನ್ನು ಅರಿತುಕೊಂಡ ಭಕ್ತಾದಿಗಳು ಅವನನ್ನು ಸೆಜರೇಯಕ್ಕೆ ಕರೆತಂದು ಅಲ್ಲಿಂದ ತಾರ್ಸಕ್ಕೆ ಕಳುಹಿಸಿಬಿಟ್ಟರು.</verse>
				<verse number="31">ಇಂತಿರಲು ಜುದೇಯ, ಗಲಿಲೇಯ ಮತ್ತು ಸಮಾರಿಯದ ಧರ್ಮಸಭೆಯಲ್ಲಿ ಶಾಂತಿ ನೆಲಸಿತು. ಸಭೆ ಬೆಳೆಯುತ್ತಾ ಪ್ರಭುವಿನ ಭಯಭಕ್ತಿಯಲ್ಲಿ ಬಾಳುತ್ತಾ ಪವಿತ್ರಾತ್ಮ ಅವರ ನೆರವಿನಿಂದ ಪ್ರವರ್ಧಿಸುತ್ತಾ ಇತ್ತು.</verse>
				<verse number="32">ಪೇತ್ರನು ಅಲ್ಲಲ್ಲಿದ್ದ ಭಕ್ತವಿಶ್ವಾಸಿಗಳಿಗೆ ಭೇಟಿಕೊಡುತ್ತಾ ಲುದ್ದ ಎಂಬ ಊರಿನಲ್ಲಿ ವಾಸವಾಗಿದ್ದ ಭಕ್ತರ ಬಳಿಗೆ ಬಂದನು.</verse>
				<verse number="33">ಅಲ್ಲಿ ಪಾರ್ಶ್ವವಾಯು ಪೀಡಿತನಾಗಿ ಎಂಟು ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಐನೇಯಾ ಎಂಬವನನ್ನು ಕಂಡನು.</verse>
				<verse number="34">ಪೇತ್ರನು ಅವನಿಗೆ, “ಐನೇಯಾ, ಯೇಸುಕ್ರಿಸ್ತರು ನಿನ್ನನ್ನು ಸ್ವಸ್ಥಪಡಿಸುತ್ತಾರೆ, ಎದ್ದು ನಿನ್ನ ಹಾಸಿಗೆಯನ್ನು ಎತ್ತಿಡು,” ಎಂದನು. ಆ ಕ್ಷಣವೇ ಅವನು ಎದ್ದನು.</verse>
				<verse number="35">ಲುದ್ದ ಮತ್ತು ಸಾರೋನಿನ ನಿವಾಸಿಗಳೆಲ್ಲರೂ ಅವನನ್ನು ಕಂಡು ಪ್ರಭುವಿನ ಭಕ್ತರಾದರು.</verse>
				<verse number="36">ಜೊಪ್ಪ ಎಂಬ ಊರಿನಲ್ಲಿ ತಬಿಥ ಎಂಬ ಒಬ್ಬ ಭಕ್ತೆ ಇದ್ದಳು. (ಗ್ರೀಕ್ ಭಾಷೆಯಲ್ಲಿ ಅವಳ ಹೆಸರು ‘ದೋರ್ಕ’) ಅವಳು ಸತ್ಕಾರ್ಯಗಳಲ್ಲೂ ದಾನಧರ್ಮಗಳಲ್ಲೂ ಸದಾ ನಿರತಳಾಗಿದ್ದವಳು.</verse>
				<verse number="37">ಅವಳು ಕಾಯಿಲೆಯಿಂದ ಒಂದು ದಿನ ಸತ್ತಳು. ಜನರು ಅವಳ ಶವಕ್ಕೆ ಸ್ನಾನಮಾಡಿಸಿ ಮೇಲಂತಸ್ತಿನ ಕೋಣೆಯಲ್ಲಿ ಇರಿಸಿದರು.</verse>
				<verse number="38">ಲುದ್ದವು ಜೊಪ್ಪಕ್ಕೆ ಸಮೀಪದಲ್ಲೇ ಇತ್ತು. ಪೇತ್ರನು ಲುದ್ದದಲ್ಲಿರುವುದನ್ನು ಕೇಳಿದ ಭಕ್ತಾದಿಗಳು, “ದಯವಿಟ್ಟು ಬೇಗನೆ ನಮ್ಮೂರಿಗೆ ಬನ್ನಿ,” ಎಂದು ಇಬ್ಬರ ಮುಖಾಂತರ ಹೇಳಿ ಕಳುಹಿಸಿದರು.</verse>
				<verse number="39">ಪೇತ್ರನು ಎದ್ದು ಅವರ ಜೊತೆಯಲ್ಲೇ ಹೊರಟುಬಂದನು. ಅವನನ್ನು ಮೇಲಂತಸ್ತಿನ ಕೋಣೆಗೆ ಕರೆದುಕೊಂಡು ಹೋದರು. ಅಲ್ಲಿ ಕೂಡಿದ್ದ ವಿಧವೆಯರೆಲ್ಲರೂ ಅವನ ಸುತ್ತುವರಿದು ಅಳುತ್ತಾ, ದೋರ್ಕಳು ಜೀವದಿಂದ ಇದ್ದಾಗ ತಮಗೆ ಮಾಡಿಕೊಟ್ಟ ಬಟ್ಟೆಬರೆಗಳನ್ನು ಅವನಿಗೆ ತೋರಿಸಿದರು.</verse>
				<verse number="40">ಪೇತ್ರನು ಅವರೆಲ್ಲರನ್ನೂ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಅನಂತರ ಶವದ ಕಡೆಗೆ ತಿರುಗಿ, “ತಬಿಥಾ, ಮೇಲಕ್ಕೇಳು,” ಎಂದನು. ಆಕೆ ಕಣ್ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತಳು.</verse>
				<verse number="41">ಪೇತ್ರನು ಕೈ ನೀಡಿ ಆಕೆಯನ್ನು ಎತ್ತಿ ನಿಲ್ಲಿಸಿದನು. ಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ತಬಿಥಳನ್ನು ಅವರಿಗೆ ತೋರಿಸಿದನು.</verse>
				<verse number="42">ಈ ಸಮಾಚಾರ ಜೊಪ್ಪದಲ್ಲೆಲ್ಲಾ ಹರಡಿತು. ಅನೇಕರು ಪ್ರಭುವನ್ನು ವಿಶ್ವಾಸಿಸಿದರು.</verse>
				<verse number="43">ಪೇತ್ರನು ಹಲವು ದಿನಗಳನ್ನು ಜೊಪ್ಪದಲ್ಲಿ ಚರ್ಮ ಹದಮಾಡುವ ಸಿಮೋನನ ಮನೆಯಲ್ಲಿ ಕಳೆದನು.</verse>
			</chapter>
			<chapter number="10">
				<verse number="1">ಸೆಜರೇಯ ಪಟ್ಟಣದಲ್ಲಿ ಕೊರ್ನೇಲಿಯ ಎಂಬವನಿದ್ದನು. ಅವನು ‘ಇಟಲಿಯ ದಳ’ದಲ್ಲಿ ಒಬ್ಬ ಶತಾಧಿಪತಿ.</verse>
				<verse number="2">ಅವನೂ ಅವನ ಕುಟುಂಬವೂ ದೇವರಲ್ಲಿ ಭಯಭಕ್ತಿಯಿಂದ ಜೀವಿಸುತ್ತಿದ್ದರು. ಯೆಹೂದ್ಯರಿಗೆ ಅವನು - ಧಾರಾಳವಾಗಿ ದಾನಧರ್ಮಮಾಡುತ್ತಿದ್ದನು. ದೇವರಿಗೆ ತಪ್ಪದೆ ಪ್ರಾರ್ಥನೆ ಸಲ್ಲಿಸುತ್ತಿದ್ದನು.</verse>
				<verse number="3">ಅದೊಂದು ಮಧ್ಯಾಹ್ನ, ಸುಮಾರು ಮೂರು ಗಂಟೆಯ ಸಮಯ, ಅವನಿಗೊಂದು ದಿವ್ಯದರ್ಶನವಾಯಿತು: ದೇವದೂತನೊಬ್ಬನು ತನ್ನ ಮನೆಯೊಳಗೆ ಬಂದು, “ಕೊರ್ನೇಲಿಯಾ,” ಎಂದು ಕರೆಯುವುದನ್ನು ಸ್ಪಷ್ಟವಾಗಿ ಕಂಡನು.</verse>
				<verse number="4">ಕೊರ್ನೇಲಿಯನು ಭಯದಿಂದ ದೇವದೂತನನ್ನು ದಿಟ್ಟಿಸಿನೋಡುತ್ತಾ, “ಏನು ಸ್ವಾಮಿ?” ಎಂದನು. ಅದಕ್ಕೆ ದೇವದೂತನು, “ನಿನ್ನ ಪ್ರಾರ್ಥನೆ ಮತ್ತು ದಾನಧರ್ಮ ದೇವರನ್ನು ಮುಟ್ಟಿವೆ. ಅವರು ನಿನ್ನನ್ನು ಮೆಚ್ಚಿದ್ದಾರೆ; ನಿನ್ನ ಕೋರಿಕೆಗಳನ್ನು ಈಡೇರಿಸಲಿದ್ದಾರೆ.</verse>
				<verse number="5">ನೀನು ಈಗಲೇ ಜೊಪ್ಪಕ್ಕೆ ಆಳುಗಳನ್ನು ಕಳುಹಿಸಿ, ಪೇತ್ರ ಎಂದು ಕರೆಯಲಾಗುವ ಸಿಮೋನನನ್ನು ಬರಹೇಳು.</verse>
				<verse number="6">ಅವನು, ಸಮುದ್ರತೀರದಲ್ಲಿ ವಾಸಿಸುತ್ತಿರುವ, ಚರ್ಮ ಹದಮಾಡುವ ಸಿಮೋನನ ಮನೆಯಲ್ಲಿ ತಂಗಿದ್ದಾನೆ,” ಎಂದು ಹೇಳಿ ದೂತನು ಅದೃಶ್ಯನಾದನು.</verse>
				<verse number="7">ಕೂಡಲೇ ಕೊರ್ನೇಲಿಯನು ತನ್ನ ಇಬ್ಬರು ಪರಿಚಾರಕರನ್ನೂ ತನ್ನ ಪಹರೆಯವರಲ್ಲಿ ಧರ್ಮನಿಷ್ಠನಾಗಿದ್ದ ಒಬ್ಬ ಸೈನಿಕನನ್ನೂ ಕರೆದು,</verse>
				<verse number="8">ನಡೆದುದೆಲ್ಲವನ್ನೂ ತಿಳಿಸಿ ಅವರನ್ನು ಜೊಪ್ಪಕ್ಕೆ ಕಳುಹಿಸಿದನು.</verse>
				<verse number="9">ಮಾರನೆಯ ದಿನ ಅವರು ಪ್ರಯಾಣ ಮಾಡಿ ಜೊಪ್ಪವನ್ನು ಸಮೀಪಿಸಿದಾಗ ಮಧ್ಯಾಹ್ನ ಸಮಯ. ಆಗತಾನೇ ಪೇತ್ರನು ಪ್ರಾರ್ಥನೆ ಮಾಡಲು ಮಾಳಿಗೆಯ ಮೇಲಕ್ಕೆ ಹೋದನು.</verse>
				<verse number="10">ಅವನಿಗೆ ಹಸಿವಾಗಿ ಏನನ್ನಾದರೂ ತಿನ್ನಬೇಕು ಎನಿಸಿತು. ಊಟ ಸಿದ್ಧವಾಗುತ್ತಿದ್ದಂತೆ, ಪೇತ್ರನು ಧ್ಯಾನಪರವಶನಾಗಿ ಒಂದು ದರ್ಶನವನ್ನು ಕಂಡನು.</verse>
				<verse number="11">ಸ್ವರ್ಗದ ಬಾಗಿಲು ತೆರೆಯಿತು. ದೊಡ್ಡ ದುಪ್ಪಟಿಯಂತಹ ವಸ್ತುವೊಂದು ಇಳಿದು ಬರುತ್ತಿತ್ತು. ಅದರ ನಾಲ್ಕು ಮೂಲೆಗಳನ್ನು ಹಿಡಿದು ಭೂಮಿಯ ಮೇಲೆ ಅದನ್ನು ಇಳಿಯಬಿಡಲಾಗಿತ್ತು.</verse>
				<verse number="12">ಅದರಲ್ಲಿ, ಹರಿದಾಡುವ ಕ್ರಿಮಿಕೀಟಗಳು, ಹಾರಾಡುವ ಪಕ್ಷಿಗಳು ಮತ್ತು ಎಲ್ಲಾ ತರಹದ ಪ್ರಾಣಿಗಳು ಇದ್ದವು.</verse>
				<verse number="13">ಅಲ್ಲದೆ, “ಪೇತ್ರಾ, ಏಳು, ಕೊಯ್ದು ತಿನ್ನು,” ಎಂಬ ವಾಣಿ ಅವನಿಗೆ ಕೇಳಿಸಿತು.</verse>
				<verse number="14">ಪೇತ್ರನು, “ಇದು ಬೇಡವೆ ಬೇಡ ಸ್ವಾಮಿ, ಅಶುದ್ಧ ಹಾಗೂ ನಿಷಿದ್ಧ ಆದುದನ್ನು ನಾನೆಂದೂ ತಿಂದವನಲ್ಲ,” ಎಂದನು.</verse>
				<verse number="15">ಅದಕ್ಕೆ ಮತ್ತೊಮ್ಮೆ ಆ ವಾಣಿ ಅವನಿಗೆ, “ದೇವರೇ ಶುದ್ಧೀಕರಿಸಿರುವ ಯಾವುದನ್ನೂ ಅಶುದ್ಧವೆನ್ನಬೇಡ,” ಎಂದಿತು.</verse>
				<verse number="16">ಹೀಗೆ ಮೂರು ಸಾರಿ ನಡೆದ ಮೇಲೆ ಆ ವಸ್ತುವನ್ನು ಸ್ವರ್ಗಕ್ಕೆ ಎತ್ತಿಕೊಳ್ಳಲಾಯಿತು.</verse>
				<verse number="17">ಇತ್ತ ಪೇತ್ರನು ತಾನು ಕಂಡ ದರ್ಶನದ ಅರ್ಥವೇನಿರಬಹುದೆಂದು ತಬ್ಬಿಬ್ಬಾದನು. ಅಷ್ಟರಲ್ಲಿ ಕೊರ್ನೇಲಿಯನು ಕಳುಹಿಸಿದ್ದ ಆಳುಗಳು ಸಿಮೋನನ ಮನೆಯನ್ನು ವಿಚಾರಿಸಿ ಕಂಡುಹಿಡಿದರು. ಹೊರಬಾಗಿಲ ಬಳಿ ನಿಂತುಕೊಂಡು,</verse>
				<verse number="18">“ಪೇತ್ರನೆಂದು ಕರೆಯಲಾಗುವ ಸಿಮೋನ ಎಂಬವರು ಇಲ್ಲಿ ತಂಗಿರುವರೇ?” ಎಂದು ಕೂಗಿ ಕೇಳಿದರು.</verse>
				<verse number="19">ಪೇತ್ರನು ತನ್ನ ದರ್ಶನವನ್ನು ಕುರಿತು ಇನ್ನೂ ಆಲೋಚಿಸುತ್ತಿರುವಾಗ ಪವಿತ್ರಾತ್ಮ ಅವರು, “ಇಗೋ, ಮೂರು ಜನರು ನಿನ್ನನ್ನು ಹುಡುಕುತ್ತಾ ಬಂದಿದ್ದಾರೆ,</verse>
				<verse number="20">ಸಿದ್ಧವಾಗಿ ಕೆಳಕ್ಕೆಹೋಗು. ನಾನೇ ಅವರನ್ನು ಕಳುಹಿಸಿರುವುದರಿಂದ ಸಂಕೋಚಪಡದೆ ಅವರೊಡನೆ ಹೋಗು,” ಎಂದರು.</verse>
				<verse number="21">ಪೇತ್ರನು ಕೆಳಕ್ಕೆ ಹೋಗಿ ಆ ಜನರನ್ನು ನೋಡಿ, “ನೀವು ಹುಡುಕುತ್ತಿರುವ ವ್ಯಕ್ತಿ ನಾನೇ. ನೀವು ಬಂದ ಕಾರಣವೇನು?” ಎಂದು ವಿಚಾರಿಸಿದನು.</verse>
				<verse number="22">“ಶತಾಧಿಪತಿ ಕೊರ್ನೇಲಿಯ ನಮ್ಮನ್ನು ಕಳುಹಿಸಿದರು. ಅವರೊಬ್ಬ ಸತ್ಪುರುಷರು, ದೈವಭಕ್ತರು, ಯೆಹೂದ್ಯ ಜನತೆಯಿಂದ ಗೌರವಾನ್ವಿತರು. ನಿಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ, ನೀವು ಹೇಳುವುದನ್ನು ಕೇಳಬೇಕೆಂದು ದೇವದೂತನಿಂದ ಆದೇಶಪಡೆದಿದ್ದಾರೆ,” ಎಂದರು.</verse>
				<verse number="23">ಪೇತ್ರನು ಅವರನ್ನು ಒಳಕ್ಕೆ ಬರಮಾಡಿಕೊಂಡು ಉಪಚರಿಸಿ, ರಾತ್ರಿ ಅಲ್ಲೇ ತಂಗುವಂತೆ ಮಾಡಿದನು. ಮಾರನೆಯ ದಿನ ಪೇತ್ರನು ಅವರೊಡನೆ ಹೋದನು. ಜೊತೆಯಲ್ಲಿ ಜೊಪ್ಪದ ಕೆಲವು ಸಹೋದರರೂ ಹೋದರು.</verse>
				<verse number="24">ಮರುದಿವಸ ಅವನು ಸೆಜರೇಯವನ್ನು ತಲುಪಿದನು. ಇತ್ತ ಕೊರ್ನೇಲಿಯನು ತಾನು ಆಹ್ವಾನಿಸಿದ ನೆಂಟರಿಷ್ಟರೊಡನೆ ಮತ್ತು ಆಪ್ತಮಿತ್ರರೊಡನೆ ಪೇತ್ರನಿಗಾಗಿ ಕಾಯುತ್ತಿದ್ದನು.</verse>
				<verse number="25">ಪೇತ್ರನು ಮನೆಯನ್ನು ಪ್ರವೇಶಿಸುತ್ತಿದ್ದಂತೆ ಕೊರ್ನೇಲಿಯನು ಅವನನ್ನು ಎದುರುಗೊಂಡು, ಪಾದಕ್ಕೆರಗಿ, ಸಾಷ್ಟಾಂಗ ನಮಸ್ಕಾರಮಾಡಿದನು.</verse>
				<verse number="26">ಪೇತ್ರನು ಅವನನ್ನು ಮೇಲಕ್ಕೆಬ್ಬಿಸಿ, “ಎದ್ದು ನಿಲ್ಲು, ನಾನೂ ಒಬ್ಬ ಸಾಮಾನ್ಯ ಮನುಷ್ಯನೇ,” ಎಂದನು.</verse>
				<verse number="27">ಕೊರ್ನೇಲಿಯನೊಡನೆ ಮಾತನಾಡುತ್ತಾ ಪೇತ್ರನು ಮನೆಯೊಳಕ್ಕೆ ಬಂದಾಗ ಅಲ್ಲಿ ಅನೇಕ ಜನರು ಸಭೆ ಸೇರಿರುವುದನ್ನು ಕಂಡನು.</verse>
				<verse number="28">ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಧರ್ಮದವರೊಡನೆ ಸಂಪರ್ಕ ಇಟ್ಟುಕೊಳ್ಳುವುದು ಅಥವಾ ಅವರಿಗೆ ಭೇಟಿಕೊಡುವುದು ಧರ್ಮನಿಷಿದ್ಧ ಎಂಬುದು ನಿಮಗೆ ತಿಳಿದೇ ಇದೆ. ಆದರೆ, ನಾನು ಯಾರನ್ನೂ ಅಶುದ್ಧ ಅಥವಾ ಅಸ್ಪೃಶ್ಯ ಎನ್ನಬಾರದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾರೆ.</verse>
				<verse number="29">ಆದುದರಿಂದಲೇ ನೀವು ಹೇಳಿಕಳುಹಿಸಿದಾಗ ನಾನು ಯಾವ ಆಕ್ಷೇಪಣೆಮಾಡದೆ ಬಂದಿದ್ದೇನೆ. ಈಗ ನನ್ನನ್ನು ಕರೆದ ಕಾರಣವೇನೆಂದು ತಿಳಿಯಬಯಸುತ್ತೇನೆ,” ಎಂದನು.</verse>
				<verse number="30">ಆಗ ಕೊರ್ನೇಲಿಯನು, “ನಾನು ಮೂರು ದಿನಗಳ ಹಿಂದೆ ಮಧ್ಯಾಹ್ನ ಮೂರು ಗಂಟೆಯ ಇದೇ ಸಮಯದಲ್ಲಿ ಪ್ರಾರ್ಥನೆ ಮಾಡುತ್ತಾ ಇದ್ದೆ. ಹಠಾತ್ತನೆ ಶೋಭಾಯಮಾನ ವಸ್ತ್ರ ಧರಿಸಿದ್ದ ವ್ಯಕ್ತಿಯೊಬ್ಬನು ನನ್ನೆದುರಿಗೆ ನಿಂತನು.</verse>
				<verse number="31">ಅವನು, “ಕೊರ್ನೇಲಿಯಾ, ದೇವರು ನಿನ್ನ ಪ್ರಾರ್ಥನೆಯನ್ನು ಆಲಿಸಿದ್ದಾರೆ; ನಿನ್ನ ದಾನಧರ್ಮಗಳನ್ನು ಮೆಚ್ಚಿದ್ದಾರೆ.</verse>
				<verse number="32">ಯಾರನ್ನಾದರೂ ಜೊಪ್ಪಕ್ಕೆ ಕಳುಹಿಸಿ ಪೇತ್ರ ಎಂದು ಕರೆಯಲಾದ ಸಿಮೋನನನ್ನು ಬರಮಾಡಿಕೊ. ಅವನು ಸಮುದ್ರತೀರದಲ್ಲಿ ವಾಸಿಸುತ್ತಿರುವ, ಚರ್ಮ ಹದಮಾಡುವ ಸಿಮೋನನ ಮನೆಯಲ್ಲಿ ತಂಗಿದ್ದಾನೆ,” ಎಂದನು.</verse>
				<verse number="33">ಅಂತೆಯೇ ನಾನು ತಕ್ಷಣ ತಮ್ಮನ್ನು ಕರೆತರಲು ಕಳುಹಿಸಿದೆ. ತಾವು ಇಲ್ಲಿಗೆ ದಯಮಾಡಿಸಿದಿರಿ. ಪ್ರಭು ತಮಗೆ ಆಜ್ಞಾಪಿಸಿರುವುದನ್ನೆಲ್ಲಾ ಕೇಳಲು ನಾವೆಲ್ಲರೂ ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು.</verse>
				<verse number="34">ಆಗ ಪೇತ್ರನು ಹೀಗೆಂದು ಉಪದೇಶ ಮಾಡಿದನು: “ದೇವರು ಪಕ್ಷಪಾತಿಯಲ್ಲ. ಈ ವಿಷಯ ನನಗೆ ಮನದಟ್ಟಾಗಿದೆ.</verse>
				<verse number="35">ದೇವರಿಗೆ ಭಯಪಟ್ಟು ಸತ್ಪುರುಷನಾಗಿ ಬಾಳುವವನು ಯಾವ ಜನಾಂಗದವನೇ ಆಗಿರಲಿ, ಅವನು ಅವರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.</verse>
				<verse number="36">ಸಮಸ್ತ ಮಾನವಕೋಟಿಯ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ಶಾಂತಿ ಲಭಿಸುತ್ತದೆ ಎಂಬ ಶುಭಸಂದೇಶವನ್ನು ದೇವರು ಇಸ್ರಯೇಲ್ ಜನಾಂಗಕ್ಕೆ ಸಾರಿದರು. ಈ ವಿಷಯ ನಿಮಗೆ ತಿಳಿದಿದೆ.</verse>
				<verse number="37">ಇತ್ತೀಚೆಗೆ ಜುದೇಯ ನಾಡಿನಾದ್ಯಂತ ನಡೆದ ಘಟನೆಗಳು ನಿಮಗೆ ತಿಳಿದೇ ಇರಬೇಕು.</verse>
				<verse number="38">ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.</verse>
				<verse number="39">ಅವರು ಯೆಹೂದ್ಯರ ಹಳ್ಳಿಪಳ್ಳಿಗಳಲ್ಲೂ ಜೆರುಸಲೇಮಿನಲ್ಲೂ ಎಸಗಿದ ಸಕಲ ಕಾರ್ಯಗಳಿಗೆ ನಾವು ಸಾಕ್ಷಿಗಳು. ಯೆಹೂದ್ಯರು ಆ ಯೇಸುವನ್ನು ಶಿಲುಬೆಮರಕ್ಕೆ ನೇತುಹಾಕಿ ಕೊಂದರು.</verse>
				<verse number="40">ಆದರೆ ದೇವರು ಅವರನ್ನು ಮೂರನೆಯ ದಿನ ಪುನರುತ್ಥಾನಗೊಳಿಸಿ ಪ್ರತ್ಯಕ್ಷರಾಗುವಂತೆ ಮಾಡಿದರು.</verse>
				<verse number="41">ಅವರು ಕಾಣಿಸಿಕೊಂಡದ್ದು ಎಲ್ಲಾ ಜನರಿಗೆ ಅಲ್ಲ; ದೇವರಿಂದ ಸಾಕ್ಷಿಗಳಾಗಿ ಆಯ್ಕೆಯಾಗಿದ್ದ ನಮಗೆ. ಅವರು ಪುನರುತ್ಥಾನ ಹೊಂದಿದ ನಂತರ ಅವರೊಡನೆಯೇ ಊಟಮಾಡಿದವರು ನಾವು.</verse>
				<verse number="42">ಮಾನವರಿಗೆ ಶುಭಸಂದೇಶವನ್ನು ಬೋಧಿಸುವಂತೆಯೂ ಜೀವಂತರಿಗೂ ಹಾಗೂ ಮೃತರಿಗೂ ದೇವರೇ ಅವರನ್ನು ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದಾರೆಂದು ರುಜುವಾತುಪಡಿಸುವಂತೆಯೂ ನಮಗೆ ಆಜ್ಞಾಪಿಸಿದ್ದಾರೆ.</verse>
				<verse number="43">ಎಲ್ಲಾ ಪ್ರವಾದಿಗಳು ಅವರನ್ನು ಕುರಿತೇ ಸಾಕ್ಷಿ ನೀಡಿದ್ದಾರೆ; ಅವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನೂ ಅವರ ನಾಮದ ಶಕ್ತಿಯಿಂದ ಪಾಪಕ್ಷಮೆಯನ್ನು ಪಡೆಯುವನೆಂದು ಪ್ರವಾದನೆಮಾಡಿದ್ದಾರೆ.”</verse>
				<verse number="44">ಪೇತ್ರನು ಮಾತನಾಡುತ್ತಿದ್ದಂತೆ ಅವನ ಉಪದೇಶವನ್ನು ಕೇಳುತ್ತಿದ್ದ ಎಲ್ಲರ ಮೇಲೆ ಪವಿತ್ರಾತ್ಮ ಇಳಿದುಬಂದರು.</verse>
				<verse number="45">ಎಲ್ಲರು ವಿವಿಧ ಭಾಷೆಗಳನ್ನು ಮಾತನಾಡುತ್ತಾ ದೇವರ ಮಹತ್ವವನ್ನು ಸ್ತುತಿಸತೊಡಗಿದರು. ಜೊಪ್ಪದಿಂದ ಪೇತ್ರನೊಡನೆ ಬಂದಿದ್ದ ಯೆಹೂದ್ಯ ಭಕ್ತವಿಶ್ವಾಸಿಗಳು ಇದನ್ನು ಕಂಡು, ದೇವರು ಅನ್ಯಧರ್ಮದವರ ಮೇಲೂ ಪವಿತ್ರಾತ್ಮಧಾರೆ ಎರೆಯುತ್ತಿದ್ದಾರಲ್ಲಾ ಎಂದು ವಿಸ್ಮಿತರಾದರು. ಆಗ ಪೇತ್ರನು,</verse>
				<verse number="46"></verse>
				<verse number="47">“ನಮ್ಮಂತೆಯೇ ಪವಿತ್ರಾತ್ಮ ಅವರನ್ನು ಪಡೆದಿರುವ ಈ ಜನರಿಗೆ ದೀಕ್ಷಾಸ್ನಾನ ಕೊಡಲು ಅಭ್ಯಂತರವಿದೆಯೇ?’ ಎಂದನು.</verse>
				<verse number="48">ಅನಂತರ ಅವರಿಗೆ ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನ ಪಡೆಯುವಂತೆ ಆಜ್ಞಾಪಿಸಿದನು. ಅದಾದ ಬಳಿಕ ತಮ್ಮೊಡನೆ ಕೆಲವು ದಿನ ಇರಬೇಕೆಂದು ಪೇತ್ರನನ್ನು ಆ ಜನರು ಕೇಳಿಕೊಂಡರು.</verse>
			</chapter>
			<chapter number="11">
				<verse number="1">ಅನ್ಯಧರ್ಮದವರೂ ಸಹ ದೈವವಾಕ್ಯವನ್ನು ಸ್ವೀಕರಿಸಿದರೆಂಬ ಸುದ್ದಿ ಜುದೇಯದಲ್ಲಿದ್ದ ಪ್ರೇಷಿತರಿಗೂ ವಿಶ್ವಾಸಿಗಳಿಗೂ ಮುಟ್ಟಿತು.</verse>
				<verse number="2">ಪೇತ್ರನು ಜೆರುಸಲೇಮಿಗೆ ಹೋದಾಗ ಅನ್ಯಧರ್ಮದವರಿಗೆ ಸುನ್ನತಿಯಾಗಬೇಕು ಎನ್ನುತ್ತಿದ್ದ ಪಂಗಡದವರು ಮುಂದೆ ಬಂದು,</verse>
				<verse number="3">“ನೀನು ಸುನ್ನತಿಯಿಲ್ಲದ ಅನ್ಯಧರ್ಮದವರ ಮನೆಗೆ ಭೇಟಿಕೊಟ್ಟು ಅವರೊಡನೆ ಊಟಮಾಡಿದ್ದೇಕೆ?” ಎಂದು ಆಕ್ಷೇಪಿಸಿದರು.</verse>
				<verse number="4">ಅದಕ್ಕೆ ಪೇತ್ರನು ನಡೆದ ವೃತ್ತಾಂತವನ್ನು ಆಮೂಲಾಗ್ರವಾಗಿ ಅವರಿಗೆ ವಿವರಿಸಿದನು:</verse>
				<verse number="5">“ಜೊಪ್ಪ ಪಟ್ಟಣದಲ್ಲಿ ನಾನು ಧ್ಯಾನಪರವಶನಾಗಿದ್ದಾಗ ದರ್ಶನವೊಂದನ್ನು ಕಂಡೆ. ಸ್ವರ್ಗದಿಂದ ದೊಡ್ಡ ದುಪ್ಪಟಿಯಂಥ ವಸ್ತು ಒಂದು ಕೆಳಕ್ಕೆ ಇಳಿಯಿತು. ಅದರ ನಾಲ್ಕು ಮೂಲೆಗಳನ್ನು ಹಿಡಿದು ಕೆಳಕ್ಕೆ ಇಳಿಬಿಡಲಾಗಿತ್ತು. ಅದು ಬಂದು ನನ್ನ ಪಕ್ಕದಲ್ಲೇ ನಿಂತಿತು.</verse>
				<verse number="6">ಅದನ್ನು ಗಮನಿಸಿ ನೋಡಿದಾಗ ಅದರಲ್ಲಿ ಪ್ರಾಣಿಗಳೂ ಕಾಡುಮೃಗಗಳೂ ಹರಿದಾಡುವ ಕ್ರಿಮಿಕೀಟಗಳೂ ಹಾರಾಡುವ ಪಕ್ಷಿಗಳೂ ಕಂಡುಬಂದವು.</verse>
				<verse number="7">ಆಗ, ‘ಪೇತ್ರ, ಏಳು, ಕೊಯ್ದು ತಿನ್ನು’ ಎಂಬ ವಾಣಿ ನನಗೆ ಕೇಳಿಸಿತು.</verse>
				<verse number="8">ಅದಕ್ಕೆ ನಾನು, ‘ಬೇಡವೇ ಬೇಡ ಸ್ವಾಮಿ, ಅಶುದ್ಧ ಹಾಗು ಅಸ್ಪೃಶ್ಯವಾದುದು ಯಾವುದೂ ನನ್ನ ಬಾಯನ್ನು ಎಂದೂ ಹೊಕ್ಕಿಲ್ಲ,’ ಎಂದೆ.</verse>
				<verse number="9">ಮತ್ತೊಮ್ಮೆ ಆ ವಾಣಿ ಸ್ವರ್ಗಲೋಕದಿಂದ, ‘ದೇವರೇ ಶುದ್ಧಿಕರಿಸಿರುವ ಏನನ್ನೂ ನೀನು ಅಶುದ್ಧವೆನ್ನಬೇಡ,’ ಎಂದು ಉತ್ತರಿಸಿತು.</verse>
				<verse number="10">ಹೀಗೆ ಮೂರು ಬಾರಿ ನಡೆದ ಮೇಲೆ, ಅವೆಲ್ಲವನ್ನೂ ಒಟ್ಟಿಗೆ ಸ್ವರ್ಗಕ್ಕೆ ಮರಳಿ ಎಳೆದುಕೊಳ್ಳಲಾಯಿತು.</verse>
				<verse number="11">ಅದೇ ಸಮಯಕ್ಕೆ ಸರಿಯಾಗಿ, ಸೆಜರೇಯದಿಂದ ಕಳುಹಿಸಲಾದ ಮೂರುಮಂದಿ ನನ್ನನ್ನು ಹುಡುಕಿಕೊಂಡು, ನಾನು ತಂಗಿದ್ದ ಮನೆಗೆ ಬಂದರು.</verse>
				<verse number="12">ನಾನು ಸಂಕೋಚಪಡದೆ ಅವರೊಡನೆ ಹೋಗಬೇಕೆಂದು ಪವಿತ್ರಾತ್ಮ ತಿಳಿಸಿದರು. ಜೊಪ್ಪದ ಈ ಆರುಮಂದಿ ಭಕ್ತರೂ ನನ್ನೊಡನೆ ಸೆಜರೇಯಕ್ಕೆ ಬಂದರು. ನಾವೆಲ್ಲರೂ ಕೊರ್ನೇಲಿಯನ ಮನೆಯನ್ನು ಪ್ರವೇಶಿಸಿದೆವು.</verse>
				<verse number="13">ಅವನು, “ನನ್ನ ಮನೆಯಲ್ಲೇ ದೂತನೊಬ್ಬನು ಕಾಣಿಸಿಕೊಂಡು, ‘ಈಗಲೇ ಯಾರನ್ನಾದರೂ ಜೊಪ್ಪಕ್ಕೆ ಕಳುಹಿಸಿ ಪೇತ್ರ ಎಂದು ಕರೆಯಲಾಗುವ ಸಿಮೋನನನ್ನು ಬರಹೇಳು.</verse>
				<verse number="14">ಅವನು ನೀನೂ ನಿನ್ನ ಕುಟುಂಬದವರೆಲ್ಲರೂ ಪಡೆಯಬಹುದಾದಂಥ ಜೀವೋದ್ಧಾರದ ಸಂದೇಶವನ್ನು ನೀಡುವನು,’ ಎಂದು ತಿಳಿಸಿದನು” ಎಂದು ನಮಗೆ ಹೇಳಿದನು.</verse>
				<verse number="15">ನಾನು ಉಪದೇಶಮಾಡಲು ಪ್ರಾರಂಭಿಸಿದ ಕೂಡಲೇ ನಮ್ಮ ಮೇಲೆ ಇಳಿದಂತೆ ಅವರ ಮೇಲೂ ಪವಿತ್ರಾತ್ಮ ಇಳಿದುಬಂದರು.</verse>
				<verse number="16">ಆಗ ನನಗೆ, ‘ಯೊವಾನ್ನನು ನೀರಿನಿಂದ ಸ್ನಾನದೀಕ್ಷೆಯನ್ನು ಕೊಟ್ಟನು. ನೀವಾದರೋ ಪವಿತ್ರಾತ್ಮ ಅವರಿಂದ ದೀಕ್ಷಾಸ್ನಾನವನ್ನು ಪಡೆಯುವಿರಿ,’ ಎಂಬ ಪ್ರಭುವಿನ ಮಾತುಗಳು ನೆನಪಿಗೆ ಬಂದವು.</verse>
				<verse number="17">ನಾನುಪ್ರಭು ಯೇಸುಕ್ರಿಸ್ತರನ್ನು ವಿಶ್ವಾಸಿಸಿದಾಗ ನಮಗೆ ಕೊಟ್ಟ ವರವನ್ನೇ ದೇವರು ಆ ಅನ್ಯಧರ್ಮದವರಿಗೂ ಕೊಟ್ಟಿರುವರು. ಹೀಗಿರುವಲ್ಲಿ ದೇವರನ್ನು ತಡೆಗಟ್ಟಲು ನಾನಾರು?” ಎಂದನು.</verse>
				<verse number="18">ಈ ಮಾತುಗಳನ್ನು ಕೇಳಿದ ಮೇಲೆ ಅವರು ತಮ್ಮ ಆಕ್ಷೇಪಣೆಯನ್ನು ನಿಲ್ಲಿಸಿದರು, ಮಾತ್ರವಲ್ಲ, ‘ಅನ್ಯಧರ್ಮದವರೂ ಪಶ್ಚಾತ್ತಾಪಪಟ್ಟು ನವಜೀವ ಪಡೆಯುವ ಸದವಕಾಶವನ್ನು ದೇವರು ದಯಪಾಲಿಸಿದ್ದಾರಲ್ಲಾ!’ ಎಂದು ದೈವಸ್ತುತಿ ಮಾಡಿದರು.</verse>
				<verse number="19">ಸ್ತೇಫನನು ಕೊಲೆಯಾದ ಮೊದಲ್ಗೊಂಡು ಉಂಟಾದ ಹಿಂಸಾಚಾರದ ನಿಮಿತ್ತ ಭಕ್ತಾದಿಗಳು ಚದರಿಹೋದರು. ಅವರಲ್ಲಿ ಕೆಲವರು ಫೆನಿಷ್ಯ, ಸೈಪ್ರಸ್, ಅಂತಿಯೋಕ್ಯದವರೆಗೂ ಹೋಗಿ ಶುಭಸಂದೇಶವನ್ನು ಸಾರಿದರು. ಆದರೆ ಇದನ್ನು ಸಾರಿದ್ದು ಯೆಹೂದ್ಯರಿಗೆ ಮಾತ್ರ.</verse>
				<verse number="20">ಸೈಪ್ರಸ್ ಮತ್ತು ಸಿರೇನಿನ ಕೆಲವು ಭಕ್ತರಾದರೋ ಅಂತಿಯೋಕ್ಯಕ್ಕೆ ಹೋಗಿ ಪ್ರಭು ಯೇಸುವಿನ ಶುಭಸಂದೇಶವನ್ನು ಗ್ರೀಕರಿಗೂ ಸಾರಿದರು.</verse>
				<verse number="21">ಪ್ರಭುವಿನ ಶಕ್ತಿ ಅವರೊಡನೆ ಇತ್ತು. ಜನರು ಬಹುಸಂಖ್ಯೆಯಲ್ಲಿ ಪ್ರಭುವಿನಲ್ಲಿ ವಿಶ್ವಾಸವಿಟ್ಟು ಅವರ ಭಕ್ತರಾದರು.</verse>
				<verse number="22">ಈ ಸಮಾಚಾರ ಜೆರುಸಲೇಮಿನ ಧರ್ಮಸಭೆಗೆ ತಲುಪಿತು. ಬಾರ್ನಬನನ್ನು ಅಂತಿಯೋಕ್ಯಕ್ಕೆ ಅವರು ಕಳುಹಿಸಿದರು.</verse>
				<verse number="23">ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.</verse>
				<verse number="24">ಬಾರ್ನಬನು ಸತ್ಪುರುಷನು, ಪವಿತ್ರಾತ್ಮಭರಿತನು ಹಾಗೂ ಅಗಾಧ ವಿಶ್ವಾಸವುಳ್ಳವನು. ಅನೇಕ ಜನರು ಪ್ರಭುವಿನ ಅನುಯಾಯಿಗಳಾದರು.</verse>
				<verse number="25">ಅನಂತರ ಬಾರ್ನಬನು ಸೌಲನನ್ನು ಹುಡುಕಿಕೊಂಡು ತಾರ್ಸಕ್ಕೆ ಹೋದನು.</verse>
				<verse number="26">ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು - ಅಂತಿಯೋಕ್ಯದಲ್ಲೇ.</verse>
				<verse number="27">ಆ ದಿನಗಳಲ್ಲಿ ಕೆಲವು ಪ್ರವಾದಿಗಳು ಜೆರುಸಲೇಮಿನಿಂದ ಅಂತಿಯೋಕ್ಯಕ್ಕೆ ಬಂದರು.</verse>
				<verse number="28">ಅವರಲ್ಲಿ ಅಗಬ ಎಂಬವನು ಒಬ್ಬನು. ಇವನು ಪವಿತ್ರಾತ್ಮ ಪ್ರೇರಿತನಾಗಿ ಜಗತ್ತಿನಲ್ಲೆಲ್ಲಾ ಭೀಕರ ಕ್ಷಾಮ ಬರಲಿದೆಯೆಂದು ಮುಂತಿಳಿಸಿದನು. (ಇದು ಬಂದೊದಗಿದುದು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ)</verse>
				<verse number="29">ಆಗ ಭಕ್ತರಲ್ಲಿ ಪ್ರತಿಯೊಬ್ಬರು ತಮ್ಮ ಶಕ್ತಿಗನುಸಾರ ಜುದೇಯದಲ್ಲಿ ವಾಸಿಸುತ್ತಿದ್ದ ಭಕ್ತಾದಿಗಳಿಗೆ ನೆರವು ನೀಡಲು ನಿರ್ಧರಿಸಿದರು.</verse>
				<verse number="30">ಅಂತೆಯೇ ತಮ್ಮ ಸಹಾಯವನ್ನು ಬಾರ್ನಬ ಮತ್ತು ಸೌಲ ಇವರ ಮುಖಾಂತರ ಅಲ್ಲಿನ ಸಭಾಪ್ರಮುಖರಿಗೆ ಕಳುಹಿಸಿಕೊಟ್ಟರು.</verse>
			</chapter>
			<chapter number="12">
				<verse number="1">ಆ ದಿನಗಳಲ್ಲಿ ಅರಸ ಹೆರೋದನು ಕ್ರೈಸ್ತಸಭೆಯ ಸದಸ್ಯರಲ್ಲಿ ಕೆಲವರನ್ನು ಹಿಂಸಿಸಲು ಆರಂಭಿಸಿದನು.</verse>
				<verse number="2">ಯೊವಾನ್ನನ ಸಹೋದರ ಯಕೋಬನನ್ನು ಖಡ್ಗದಿಂದ ಕೊಲ್ಲಿಸಿದನು.</verse>
				<verse number="3">ಇದರಿಂದ ಯೆಹೂದ್ಯರಿಗೆ ಮೆಚ್ಚುಗೆಯಾಯಿತೆಂದು ತಿಳಿದು ಪೇತ್ರನನ್ನು ಬಂಧಿಸಿದನು. (ಆಗ ಹುಳಿರಹಿತ ರೊಟ್ಟಿಯ ಹಬ್ಬ ನಡೆಯುತ್ತಿತ್ತು).</verse>
				<verse number="4">ಪೇತ್ರನನ್ನು ಬಂಧಿಸಿದ ಮೇಲೆ ಸೆರೆಮನೆಯಲ್ಲಿಟ್ಟು ಅವನನ್ನು ಕಾಯಲು ನಾಲ್ಕು ನಾಲ್ಕು ಸೈನಿಕರಿದ್ದ ಚತುರ್ದಳಕ್ಕೆ ವಹಿಸಿದನು. ಪಾಸ್ಕಹಬ್ಬದ ನಂತರ ಪೇತ್ರನನ್ನು ಬಹಿರಂಗ ವಿಚಾರಣೆಗೆ ಗುರಿಪಡಿಸಲು ಉದ್ದೇಶಿಸಿದ್ದನು.</verse>
				<verse number="5">ಪೇತ್ರನನ್ನು ಹೀಗೆ ಸೆರೆಯಲ್ಲಿಟ್ಟಿದ್ದಾಗ, ಸಭೆಯು ಅವನಿಗಾಗಿ ಶ್ರದ್ಧೆಯಿಂದ ದೇವರಿಗೆ ಪ್ರಾರ್ಥನೆಮಾಡುತ್ತಿತ್ತು.</verse>
				<verse number="6">ಹೆರೋದನು ಪೇತ್ರನನ್ನು ಜನರ ಮುಂದೆ ತರಬೇಕೆಂದಿದ್ದ ಹಿಂದಿನ ರಾತ್ರಿ ಅದು. ಪೇತ್ರನು ಇಬ್ಬರು ಸೈನಿಕರ ನಡುವೆ ನಿದ್ರಿಸುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಪಹರೆಯವರು ಸೆರೆಮನೆಯ ದ್ವಾರದಲ್ಲಿ ಕಾವಲಿದ್ದರು.</verse>
				<verse number="7">ಫಕ್ಕನೆ ದೇವದೂತನೊಬ್ಬನು ಕಾಣಿಸಿಕೊಂಡನು. ಆ ಕೋಣೆಯೆಲ್ಲಾ ಪ್ರಕಾಶಮಯವಾಯಿತು. ದೂತನು ಪೇತ್ರನ ಭುಜವನ್ನು ತಟ್ಟಿ, ಎಬ್ಬಿಸಿ, “ಬೇಗನೆ ಏಳು,” ಎಂದನು. ಆ ಕ್ಷಣವೇ ಪೇತ್ರನ ಕೈಗಳಿಗೆ ಕಟ್ಟಿದ್ದ ಸರಪಣಿಗಳು ಕಳಚಿಬಿದ್ದವು.</verse>
				<verse number="8">ದೂತನು ಅವನಿಗೆ, “ಬಟ್ಟೆಯನ್ನು ತೊಟ್ಟುಕೋ, ಪಾದರಕ್ಷೆಯನ್ನು ಮೆಟ್ಟಿಕೋ,” ಎಂದನು. ಪೇತ್ರನು ಹಾಗೆಯೇ ಮಾಡಿದನು. ಅನಂತರ ದೂತನು, “ನಿನ್ನ ಮೇಲುಹೊದಿಕೆಯನ್ನು ಹೊದ್ದುಕೊಂಡು ನನ್ನ ಜೊತೆ ಬಾ,” ಎಂದನು.</verse>
				<verse number="9">ಪೇತ್ರನು ಸೆರೆಮನೆಯ ಹೊರಕ್ಕೆ ಅವನನ್ನು ಹಿಂಬಾಲಿಸಿ ಹೋದನು. ಅಷ್ಟಾದರೂ ದೂತನು ಮಾಡುತ್ತಿರುವುದು ನಿಜವೆಂದು ಅವನಿಗೆ ಅರಿವಾಗಲಿಲ್ಲ; ತನಗೇನೋ ದರ್ಶನವಾಗುತ್ತಿದೆಯೆಂದೆ ಭಾವಿಸಿದನು.</verse>
				<verse number="10">ಅವರು ಮೊದಲನೆಯ ಮತ್ತು ಎರಡನೆಯ ಕಾವಲನ್ನು ದಾಟಿದರು. ಪಟ್ಟಣದ ಕಡೆಯಿದ್ದ ಕಬ್ಬಿಣದ ದ್ವಾರದ ಬಳಿ ಬಂದರು. ಆ ದ್ವಾರ ತನ್ನಷ್ಟಕ್ಕೆ ತಾನೇ ತೆರೆಯಿತು. ಅವರು ಹೊರ ನಡೆದರು. ಬೀದಿಯೊಂದರಲ್ಲಿ ಹಾದುಹೋಗುತ್ತಿರಲು ಒಮ್ಮೆಲೆ ದೂತನು ಪೇತ್ರನನ್ನು ಬಿಟ್ಟು ಅದೃಶ್ಯನಾದನು.</verse>
				<verse number="11">ನಡೆದ ಸಂಗತಿ ಏನೆಂದು ಪೇತ್ರನಿಗೆ ಅರಿವಾದಾಗ ಆತನು, “ನಡೆದುದೆಲ್ಲಾ ಸಾಕ್ಷಾತ್ ಸತ್ಯವೆಂದು ಈಗ ನನಗೆ ತಿಳಿಯಿತು. ಪ್ರಭು ತಮ್ಮ ದೂತನನ್ನು ಕಳುಹಿಸಿ ಹೆರೋದನ ಕೈಯಿಂದಲೂ ಯೆಹೂದ್ಯರು ಮಾಡಬೇಕೆಂದಿದ್ದ ಕೇಡಿನಿಂದಲೂ ನನ್ನನ್ನು ಪಾರುಮಾಡಿದ್ದಾರೆ,” ಎಂದುಕೊಂಡನು.</verse>
				<verse number="12">ಹೀಗೆ ತನ್ನ ಪರಿಸ್ಥಿತಿಯನ್ನು ಅರಿತ ಬಳಿಕ ಪೇತ್ರನು ಮರಿಯ ಎಂಬುವಳ ಮನೆಗೆ ಹೋದನು. ಈಕೆ ‘ಮಾರ್ಕ’ ಎಂದು ಹೆರಸರುಗೊಂಡಿದ್ದ ಯೊವಾನ್ನನ ತಾಯಿ. ಆ ಮನೆಯಲ್ಲಿ ಹಲವಾರು ಜನರು ಸೇರಿ ಪ್ರಾರ್ಥನೆ ಮಾಡುತ್ತಿದ್ದರು.</verse>
				<verse number="13">ಪೇತ್ರನು ಹೊರಬಾಗಿಲನ್ನು ತಟ್ಟಿದನು. ರೋದ ಎಂಬ ಸೇವಕಿ ವಿಚಾರಿಸಲು ಬಂದಳು.</verse>
				<verse number="14">ಆಕೆ ಪೇತ್ರನ ಸ್ವರವನ್ನು ಗುರುತು ಹಚ್ಚಿದ್ದೇ ಆನಂದಪರವಶಳಾಗಿ ಬಾಗಿಲನ್ನು ಸಹ ತೆರೆಯದೆ ಒಳಕ್ಕೆ ಓಡಿದಳು. ಪೇತ್ರನು ಬಾಗಿಲ ಹೊರಗೆ ನಿಂತಿದ್ದಾನೆಂದು ಒಳಗಿದ್ದವರಿಗೆ ತಿಳಿಸಿದಳು.</verse>
				<verse number="15">ಅವರು, “ನಿನಗೇನು ಹುಚ್ಚೇ?’ ಎಂದು ಉದ್ಗರಿಸಿದರು. ಅವಳು ತಾನು ಹೇಳುತ್ತಿರುವುದು ನಿಜವೆಂದು ಒತ್ತಿ ಹೇಳಿದಳು. “ಹಾಗಾದರೆ ಅದು ಅವನ ದೂತನಿರಬೇಕು,” ಎಂದುಕೊಂಡರು.</verse>
				<verse number="16">ಇತ್ತ ಪೇತ್ರನು ಬಾಗಿಲು ತಟ್ಟುತ್ತಲೇ ಇದ್ದನು. ಕೊನೆಗೆ ಅವರು ಬಂದು ಬಾಗಿಲನ್ನು ತೆರೆದರು. ಪೇತ್ರನನ್ನು ಕಂಡು ಸ್ತಬ್ಧರಾದರು.</verse>
				<verse number="17">ಪೇತ್ರನು ನಿಶ್ಯಬ್ದರಾಗಿರುವಂತೆ ಅವರಿಗೆ ಕೈಸನ್ನೆ ಮಾಡಿದನು. ಪ್ರಭು ತನ್ನನ್ನು ಹೇಗೆ ಸೆರೆಮನೆಯಿಂದ ಹೊರಗೆ ಕರೆತಂದರೆಂದು ವಿವರಿಸಿದನು. ಈ ವಿಷಯವನ್ನು ಯಕೋಬನಿಗೂ ಇತರ ಸಹೋದರರಿಗೂ ತಿಳಿಸಲು ಹೇಳಿ ಅಲ್ಲಿಂದ ಹೊರಟು ಬೇರೆ ಸ್ಥಳಕ್ಕೆ ಹೋದನು.</verse>
				<verse number="18">ಬೆಳಗಾದಾಗ ಪೇತ್ರನು ಏನಾದನೆಂದು ಸೈನಿಕರ ನಡುವೆ ದೊಡ್ಡ ಗೊಂದಲವೇ ಎದ್ದಿತು.</verse>
				<verse number="19">ಅವನನ್ನು ಹುಡುಕಿತರುವಂತೆ ಹೆರೋದನು ಆಜ್ಞಾಪಿಸಿದನು. ಆದರೆ ಅವನನ್ನು ಕಂಡುಹಿಡಿಯಲು ಅವರಿಂದಾಗಲಿಲ್ಲ. ಆದುದರಿಂದ ಪಹರೆಯವರನ್ನೇ ವಿಚಾರಣೆಗೆ ಗುರಿಮಾಡಿ ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಇದಾದ ಬಳಿಕ ಹೆರೋದನು ಜುದೇಯದಿಂದ ಹೊರಟು ಕೊಂಚಕಾಲ ಸೆಜರೇಯದಲ್ಲಿ ಇದ್ದನು.</verse>
				<verse number="20">ಹೆರೋದನು ಟೈರ್ ಮತ್ತು ಸಿದೋನಿನ ಜನರ ಮೇಲೆ ಕಡುಕೋಪಗೊಂಡಿದ್ದನು. ಅವರೆಲ್ಲರೂ ಒಟ್ಟಾಗಿ ಅವನನ್ನು ಸಂದರ್ಶಿಸಲು ಹೋದರು. ಮೊದಲು ಅರಮನೆಯ ಮೇಲ್ವಿಚಾರಕನಾದ ಬ್ಲಾಸ್ತನ ಮನಸ್ಸನ್ನು ತಮ್ಮ ಕಡೆ ಒಲಿಸಿಕೊಂಡರು. ಅನಂತರ ಅವರು ಹೆರೋದನೊಡನೆ ಸಂಧಾನಮಾಡಿಕೊಳ್ಳಲು ಯತ್ನಿಸಿದರು. ಏಕೆಂದರೆ, ಅವರು ದವಸಧಾನ್ಯಗಳಿಗಾಗಿ ಹೆರೋದನ ನಾಡನ್ನು ಅವಲಂಬಿಸಬೇಕಾಗಿತ್ತು.</verse>
				<verse number="21">ನಿಯಮಿತ ದಿನದಂದು ಹೆರೋದನು ರಾಜಪೋಷಾಕನ್ನು ಧರಿಸಿಕೊಂಡು ಜನರನ್ನುದ್ದೇಶಿಸಿ ಭಾಷಣಮಾಡಿದನು.</verse>
				<verse number="22">“ಮಾತನಾಡುತ್ತಿರುವವನು ಮಾನವನಲ್ಲ, ದೇವರೇ!” ಎಂದು ಜನರು ಘೋಷಣೆ ಮಾಡಿದರು.</verse>
				<verse number="23">ಆದರೆ ಹೆರೋದನು ದೇವರಿಗೆ ಸಲ್ಲಬೇಕಾದ ಗೌರವವನ್ನು ಸಲ್ಲಿಸಲಿಲ್ಲ. ಆದುದರಿಂದ ದೇವದೂತನು ಆ ಕ್ಷಣವೇ ಅವನನ್ನು ಸಂಹರಿಸಿದನು. ಅವನು ಹುಳಹುಪ್ಪಟೆಗಳಿಗೆ ಆಹಾರವಾದನು.</verse>
				<verse number="24">ದೇವರ ಶುಭಸಂದೇಶವಾದರೋ ಹಬ್ಬಿ ಹರಡತೊಡಗಿತು.</verse>
				<verse number="25">ಬಾರ್ನಬ ಮತ್ತು ಸೌಲನು ತಮ್ಮ ಧರ್ಮಕಾರ್ಯವನ್ನು ಮುಗಿಸಿಕೊಂಡು ಮಾರ್ಕ. ಎಂಬ ಹೆಸರುಗೊಂಡ ಯೊವಾನ್ನನೊಂದಿಗೆ ಜೆರುಸಲೇಮಿನಿಂದ ಹಿಂದಿರುಗಿದರು.</verse>
			</chapter>
			<chapter number="13">
				<verse number="1">ಅಂತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆಂದರೆ: ಬಾರ್ನಬ, ಕಾಳನೆಂದು ಕರೆಯಲಾದ ಸಿಮೆಯೋನ್, ಸಿರೇನಿನ ಲೂಸಿಯಸ್, ಸಾಮಂತ ಹೆರೋದನ ಬಾಲ್ಯ ಸ್ನೇಹಿತ ಮೆನಹೇನ ಮತ್ತು ಸೌಲ.</verse>
				<verse number="2">ಒಂದು ದಿನ ಅವರು ದೇವಾರಾಧನೆಯಲ್ಲೂ ಉಪವಾಸ ವ್ರತದಲ್ಲೂ ನಿರತರಾಗಿದ್ದಾಗ ಪವಿತ್ರಾತ್ಮ, “ಬಾರ್ನಬ ಮತ್ತು ಸೌಲರನ್ನು ನಾನು ಯಾವ ಕಾರ್ಯಕ್ಕಾಗಿ ಕರೆದಿದ್ದೇನೋ ಆ ಕಾರ್ಯಕ್ಕಾಗಿ ಮೀಸಲಾಗಿಡಿ,” ಎಂದರು.</verse>
				<verse number="3">ಅಂತೆಯೇ ಅವರು ಉಪವಾಸವಿದ್ದು, ಪ್ರಾರ್ಥನೆಮಾಡಿ, ಇವರಿಬ್ಬರ ಮೇಲೆ ಹಸ್ತನಿಕ್ಷೇಪಮಾಡಿ ಕಳುಹಿಸಿಕೊಟ್ಟರು.</verse>
				<verse number="4">ಹೀಗೆ ಪವಿತ್ರಾತ್ಮ ಅವರೇ ಕಳುಹಿಸಿದ ಬಾರ್ನಬ ಮತ್ತು ಸೌಲ ಸೆಲೂಸಿಯಾಕ್ಕೆ ಹೋದರು. ಅಲ್ಲಿಂದ ಸೈಪ್ರಸ್ ದ್ವೀಪಕ್ಕೆ ನೌಕಾಯಾನ ಮಾಡಿದರು.</verse>
				<verse number="5">ಅವರು ಸಲಮೀಸ್ ಎಂಬ ಸ್ಥಳಕ್ಕೆ ಬಂದಾಗ ಯೆಹೂದ್ಯರ ಪ್ರಾರ್ಥನಾಮಂದಿರಗಳಿಗೆ ಹೋಗಿ ಶುಭಸಂದೇಶವನ್ನು ಸಾರಿದರು. ಮಾರ್ಕನೆನಿಸಿಕೊಂಡ ಯೊವಾನ್ನ ಅವರ ಸಂಗಡವಿದ್ದು ಅವರಿಗೆ ನೆರವಾಗುತ್ತಿದ್ದನು.</verse>
				<verse number="6">ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣಮಾಡುತ್ತಾ ಪಾಫೊಸ್ ಎಂಬ ಊರಿಗೆ ಹೋದರು. ಅಲ್ಲಿ ‘ಬಾರ್‍ಯೇಸು’ ಎಂಬ ಮಂತ್ರವಾದಿಯನ್ನು ಕಂಡರು.</verse>
				<verse number="7">ತಾನೊಬ್ಬ ಪ್ರವಾದಿಯೆಂದು ನಟಿಸುತ್ತಿದ್ದ ಯೆಹೂದ್ಯ ಅವನು; ಮಾತ್ರವಲ್ಲ, ಅಲ್ಲಿಯ ರಾಜ್ಯಪಾಲನಾಗಿದ್ದ ಸೆರ್ಗ್ಯಪೌಲನ ಪರಿವಾರಕ್ಕೆ ಸೇರಿದ್ದನು. ಈ ರಾಜ್ಯಪಾಲನೊಬ್ಬ ಜ್ಞಾನಿ. ಇವನು ದೇವರವಾಕ್ಯವನ್ನು ಕೇಳಲಪೇಕ್ಷಿಸಿ ಬಾರ್ನಬ ಮತ್ತು ಸೌಲರನ್ನು ಆಹ್ವಾನಿಸಿದನು.</verse>
				<verse number="8">ಆದರೆ ಆ ಮಂತ್ರವಾದಿ (ಗ್ರೀಕ್ ಭಾಷೆಯಲ್ಲಿ ಅವನನ್ನು ‘ಎಲಿಮ’ ಎಂದು ಕರೆಯುತ್ತಿದ್ದರು) ಅವರನ್ನು ವಿರೋಧಿಸಿದನು. ರಾಜ್ಯಪಾಲನು ವಿಶ್ವಾಸಿಯಾಗದಂತೆ ತಡೆಯಲು ಯತ್ನಿಸಿದನು.</verse>
				<verse number="9">ಆಗ, ಪೌಲ ಎಂದು ಹೆಸರುಗೊಂಡಿದ್ದ ಸೌಲನು ಪವಿತ್ರಾತ್ಮಭರಿತನಾಗಿ ಆ ಮಂತ್ರವಾದಿಯನ್ನು ದಿಟ್ಟಿಸಿ ನೋಡಿದನು.</verse>
				<verse number="10">“ಎಲವೋ ಪಿಶಾಚಿಕೋರನೇ, ಸರ್ವಸನ್ಮಾರ್ಗಕ್ಕೆ ಶತ್ರು ನೀನು; ಎಲ್ಲಾ ತಂತ್ರ ಕುತಂತ್ರಗಳು ನಿನ್ನಲ್ಲಿ ತುಂಬಿವೆ. ಪ್ರಭುವಿನ ಸನ್ಮಾರ್ಗಕ್ಕೆ ಅಡ್ಡಿ ಆತಂಕಗಳನ್ನು ಒಡ್ಡುತ್ತಿರುವೆಯಾ? ಇಗೋ, ಈಗ ಪ್ರಭುವಿನ ಶಾಪ ನಿನ್ನ ಮೇಲಿದೆ!</verse>
				<verse number="11">ನೀನು ಬೆಳಕನ್ನು ಕಾಣದೆ ಕೆಲವು ಕಾಲ ಕುರುಡನಾಗಿರುವೆ,” ಎಂದನು. ಆ ಕ್ಷಣವೇ ಎಲಿಮನ ಕಣ್ಣು ಮಬ್ಬಾಯಿತು; ಕತ್ತಲೆ ಕವಿದಂತಾಯಿತು; ಯಾರಾದರೂ ಕೈಹಿಡಿದು ನಡೆಸಲೆಂದು ಅವನು ತಡವರಿಸಲಾರಂಭಿಸಿದನು.</verse>
				<verse number="12">ನಡೆದುದನ್ನು ಕಂಡ ರಾಜ್ಯಪಾಲನು ಪ್ರಭುವನ್ನು ವಿಶ್ವಾಸಿಸಿದನು; ಅವರನ್ನು ಕುರಿತ ಬೋಧನೆಯನ್ನು ಕೇಳಿ ವಿಸ್ಮಿತನಾದನು.</verse>
				<verse number="13">ಪೌಲ ಮತ್ತು ಸಂಗಡಿಗರು ಪಾಫೊಸಿನಿಂದ ನೌಕಾಯಾನ ಮಾಡಿ ಪಾಂಫೀಲಿಯದ ಪೆರ್ಗ ಎಂಬಲ್ಲಿಗೆ ಬಂದರು. ಮಾರ್ಕನೆನಿಸಿಕೊಂಡ ಯೊವಾನ್ನನು ಅವರನ್ನು ಅಲ್ಲೇ ಬಿಟ್ಟು ಜೆರುಸಲೇಮಿಗೆ ಹಿಂದಿರುಗಿದನು.</verse>
				<verse number="14">ಉಳಿದವರು ಪೆರ್ಗದಿಂದ ಹೊರಟು ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‍ದಿನದಲ್ಲಿ ಪ್ರಾರ್ಥನಾಮಂದಿರಕ್ಕೆ ಹೋಗಿ ಕುಳಿತುಕೊಂಡರು.</verse>
				<verse number="15">ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥಗಳಿಂದ ವಾಚನವಾದ ನಂತರ ಪ್ರಾರ್ಥನಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಉಪಯುಕ್ತವಾದ ಹಿತೋಕ್ತಿ ಏನಾದರೂ ಇದ್ದರೆ ಉಪದೇಶಮಾಡಿ,” ಎಂದು ಕೇಳಿಕೊಂಡರು.</verse>
				<verse number="16">ಆಗ ಪೌಲನು ಎದ್ದು ನಿಂತು ಜನರಿಗೆ ನಿಶ್ಯಬ್ದವಾಗಿರುವಂತೆ ಕೈಸನ್ನೆ ಮಾಡಿ, ಹೀಗೆಂದು ಉಪದೇಶ ಮಾಡಲಾರಂಭಿಸಿದನು: “ಇಸ್ರಯೇಲ್ ಬಾಂಧವರೇ, ಹಾಗು ನಿಜದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಕೇಳಿ:</verse>
				<verse number="17">ಇಸ್ರಯೇಲ್ ಜನರ ದೇವರು ನಮ್ಮ ಪೂರ್ವಜರನ್ನು ಆರಿಸಿಕೊಂಡರು. ಈಜಿಪ್ಟಿನಲ್ಲಿ ಪರಕೀಯರಾಗಿ ವಾಸಿಸುತ್ತಿದ್ದ ನಮ್ಮ ಜನರನ್ನು ಪ್ರಬಲ ಜನಾಂಗವನ್ನಾಗಿ ಮಾಡಿದರು. ತಮ್ಮ ಮಹಾಶಕ್ತಿಯನ್ನು ಪ್ರಯೋಗಿಸಿ ಅವರನ್ನು ಈಜಿಪ್ಟಿನಿಂದ ಹೊರಗೆ ತಂದರು.</verse>
				<verse number="18">ಬೆಂಗಾಡಿನಲ್ಲಿ ಸುಮಾರು ನಾಲ್ವತ್ತು ವರ್ಷಗಳ ಕಾಲ ಅವರನ್ನು ಕಾಪಾಡಿದರು.</verse>
				<verse number="19">ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ನಮ್ಮ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟರು.</verse>
				<verse number="20">ಹೀಗೆ ಸುಮಾರು ನಾನೂರ ಐವತ್ತು ವರ್ಷಗಳು ಕಳೆದವು. ಅನಂತರ ಪ್ರವಾದಿ ಸಮುವೇಲನ ಕಾಲದವರೆಗೆ ದೇವರು ಅವರಿಗೆ ನ್ಯಾಯಾಧಿಪತಿಗಳನ್ನು ಕಳುಹಿಸಿದರು.</verse>
				<verse number="21">ತಮಗೆ ಅರಸನು ಬೇಕೆಂದು ಕೇಳಿಕೊಂಡಾಗ ದೇವರು ಬೆನ್ಯಾಮೀನ ಗೋತ್ರದ ಕೀಷನ ಮಗ ಸೌಲನನ್ನು ನೇಮಿಸಿದರು. ಇವನು ನಾಲ್ವತ್ತು ವರ್ಷ ಆಳಿದನು.</verse>
				<verse number="22">ಅನಂತರ ದೇವರು ಸೌಲನನ್ನು ತ್ಯಜಿಸಿ ದಾವೀದನನ್ನು ಅರಸನನ್ನಾಗಿ ನೇಮಿಸಿದರು. ಇವನ ಬಗ್ಗೆ ದೇವರು, “ಜೆಸ್ಸೆಯನ ಮಗ ದಾವೀದನು ನನಗೆ ಮೆಚ್ಚುಗೆಯಾದ ವ್ಯಕ್ತಿ; ಇವನು ನನ್ನ ಆಶೆ ಆಕಾಂಕ್ಷೆಗಳನ್ನೆಲ್ಲಾ ಪೂರೈಸುವನು,” ಎಂದು ತಮ್ಮ ಒಪ್ಪಿಗೆಯನ್ನು ಸೂಚಿಸಿದರು.</verse>
				<verse number="23">ಈ ದಾವೀದನ ಸಂತತಿಯಿಂದಲೇ ದೇವರು ತಮ್ಮ ವಾಗ್ದಾನದ ಪ್ರಕಾರ ಇಸ್ರಯೇಲ್ ಜನರಿಗೆ ಒಬ್ಬ ಉದ್ಧಾರಕನನ್ನು ಕಳುಹಿಸಿದರು. ಇವರೇ ಯೇಸುಸ್ವಾಮಿ.</verse>
				<verse number="24">ಇವರ ಆಗಮನಕ್ಕೆ ಸಿದ್ಧತೆಯಾಗಿ, ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿ ಸ್ನಾನದೀಕ್ಷೆಯನ್ನು ಪಡೆಯಬೇಕೆಂದು ಯೊವಾನ್ನನು ಇಸ್ರಯೇಲಿನ ಎಲ್ಲ ಜನರಿಗೆ ಸಾರಿದರು.</verse>
				<verse number="25">ಯೊವಾನ್ನನು ತನ್ನ ನಿಯೋಗವನ್ನು ಪೂರೈಸುತ್ತಿದ್ದಂತೆ ಜನರಿಗೆ, ‘ನಾನು ಯಾರೆಂದು ನೀವು ನೆನೆಸುತ್ತೀರಿ? ನೀವು ಎದುರು ನೋಡುತ್ತಿರುವ ವ್ಯಕ್ತಿ ನಾನಲ್ಲ. ನನ್ನ ಅನಂತರ ಒಬ್ಬರು ಬರುವರು; ಅವರ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ,’ ಎಂದನು.</verse>
				<verse number="26">“ನನ್ನ ಸಹೋದರರೇ, ಅಬ್ರಹಾಮನ ಸಂತತಿಯವರೇ, ಮತ್ತು ದೇವರಲ್ಲಿ ಭಯಭಕ್ತಿ ಉಳ್ಳ ಇನ್ನಿತರರೇ, ಈ ಜೀವೋದ್ಧಾರದ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.</verse>
				<verse number="27">ಜೆರುಸಲೇಮಿನ ನಿವಾಸಿಗಳು ಮತ್ತು ಅವರ ಅಧಿಕಾರಿಗಳು ಯೇಸು ಲೋಕೋದ್ಧಾರಕನೆಂದು ಅರಿತುಕೊಳ್ಳಲಿಲ್ಲ. ಪ್ರತಿ ಸಬ್ಬತ್‍ದಿನ ಓದಲಾದ ಪ್ರವಾದಿಗಳ ವಾಕ್ಯಗಳನ್ನು ಅವರು ಗ್ರಹಿಸಿಕೊಳ್ಳಲಿಲ್ಲ. ಯೇಸುವಿಗೆ ಮರಣದಂಡನೆಯನ್ನು ವಿಧಿಸಿ ಆ ಪ್ರವಾದನೆಗಳು ನಿಜವಾಗಲು ಕಾರಣರಾದರು.</verse>
				<verse number="28">ಮರಣದಂಡನೆ ವಿಧಿಸಲು ಯಾವ ಕಾರಣವಿಲ್ಲದಿದ್ದರೂ ಅವರನ್ನು ಕೊಲ್ಲಿಸುವಂತೆ ಪಿಲಾತನನ್ನು ಕೇಳಿಕೊಂಡರು.</verse>
				<verse number="29">ಯೇಸುವನ್ನು ಕುರಿತು ಪವಿತ್ರಗ್ರಂಥ ಹೇಳುವುದೆಲ್ಲವೂ ನೆರವೇರಿದ ಮೇಲೆ ಅವರನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಮಾಡಿದರು.</verse>
				<verse number="30">ಆದರೆ ದೇವರು ಅವರನ್ನು ಮರಣದಿಂದ ಪುನರುತ್ಥಾನಗೊಳಿಸಿದರು.</verse>
				<verse number="31">ಹೀಗೆ ಪುನರುತ್ಥಾನ ಹೊಂದಿದ ಯೇಸು, ಗಲಿಲೇಯದಿಂದ ತಮ್ಮೊಡನೆ ಜೆರುಸಲೇಮಿಗೆ ಬಂದಿದ್ದವರಿಗೆ ಕಾಣಿಸಿಕೊಂಡರು. ಆ ವ್ಯಕ್ತಿಗಳೇ ಈಗ ನಮ್ಮ ಜನರ ಮಧ್ಯೆ ಇರುವ ಯೇಸುವಿನ ಪರವಾದ ಸಾಕ್ಷಿಗಳು.</verse>
				<verse number="32">ನಾವೀಗ ನಿಮಗೆ ಸಾರುವ ಶುಭಸಂದೇಶ ಇದು: ದೇವರು ಯೇಸುಸ್ವಾಮಿಯನ್ನು ಪುನರುತ್ಥಾನಗೊಳಿಸಿದ್ದಾರೆ. ಈ ಮೂಲಕ ನಮ್ಮ ಪೂರ್ವಜರಿಗೆ ಮಾಡಿದ ವಾಗ್ದಾನವನ್ನು ಅವರ ಸಂತತಿಯಾದ ನಮಗಿಂದು ಈಡೇರಿಸಿದ್ದಾರೆ. ಎರಡನೆಯ ಕೀರ್ತನೆಯಲ್ಲಿ ಹೀಗೆಂದು ಬರೆದಿದೆ: ‘ನೀನೇ ನನ್ನ ಪುತ್ರ, ನಾನಿಂದು ನಿನ್ನ ಜನಕ.’</verse>
				<verse number="33"></verse>
				<verse number="34">“ಯೇಸುವನ್ನು ಸಮಾಧಿಯಲ್ಲೇ ಕೊಳೆತುಹೋಗಲು ಬಿಡದೆ ಮರಣದಿಂದ ಪುನರುತ್ಥಾನಗೊಳಿಸಿದ ದೇವರು ಹೀಗೆಂದಿದ್ದಾರೆ: ‘ನಾನು ದಾವೀದನಿಗೆ ವಾಗ್ದಾನಮಾಡಿದ ಪವಿತ್ರ ಹಾಗೂ ನಿಶ್ಚಿತ ವರಗಳನ್ನು ನಿಮಗೆ ಕೊಡುತ್ತೇನೆ.’</verse>
				<verse number="35">ಇನ್ನೊಂದು ಕೀರ್ತನೆಯಲ್ಲಿ ಹೀಗೆಂದಿದ್ದಾರೆ: ನಿಮ್ಮ ಪರಮ ಪೂಜ್ಯನು ಸಮಾಧಿಯಲ್ಲಿ ಕೊಳೆತುಹೋಗಲು ನೀವು ಬಿಡುವುದಿಲ್ಲ.’</verse>
				<verse number="36">“ದಾವೀದನು ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕೆ ತಲೆಬಾಗಿ ಬಾಳಿದನು; ಸತ್ತಾಗ ಅವನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು.</verse>
				<verse number="37">ಆದರೆ ದೇವರು ಮರಣದಿಂದ ಎಬ್ಬಿಸಿದ ಯೇಸುಸ್ವಾಮಿ ಕೊಳೆಯುವ ಅವಸ್ಥೆಯನ್ನು ಅನುಭವಿಸಲಿಲ್ಲ.</verse>
				<verse number="38">“ನನ್ನ ಸಹೋದರರೇ, ನಿಮಗಿದು ತಿಳಿದಿರಲಿ: ಪಾಪಕ್ಷಮೆ ಯೇಸುವಿನ ಮುಖಾಂತರವೇ ಸಾಧ್ಯ ಎಂದು ಸಾರಲಾಗುತ್ತಿದೆ. ಮೋಶೆಯ ನಿಯಮಗಳ ಪಾಲನೆಯ ಮೂಲಕ ಪಾಪಗಳಿಂದ ವಿಮೋಚನೆ ಹೊಂದಲು ನಿಮ್ಮಿಂದಾಗಲಿಲ್ಲ; ಆದರೆ ಯೇಸುವನ್ನು ವಿಶ್ವಾಸಿಸುವ ಪ್ರತಿ ಒಬ್ಬನೂ ಅವೆಲ್ಲವುಗಳಿಂದ ವಿಮೋಚನೆ ಪಡೆಯುತ್ತಾನೆ.</verse>
				<verse number="39"></verse>
				<verse number="40">ಆದುದರಿಂದ ಪ್ರವಾದಿಗಳ ಈ ಮಾತುಗಳು ನಿಮ್ಮಲ್ಲಿ ನಿಜವಾಗದಂತೆ ಎಚ್ಚರಿಕೆಯಾಗಿರಿ:</verse>
				<verse number="41">‘ಅವಹೇಳನ ಮಾಡುವವರೇ, ಗಮನಿಸಿರಿ; ದಿಗ್ಭ್ರಮೆಗೊಂಡು ದಿಕ್ಕುಪಾಲಾಗಿರಿ; ನಿಮ್ಮ ಕಾಲದಲ್ಲೇ ನಾನೊಂದು ಮಹತ್ಕಾರ್ಯವನ್ನು ಮಾಡುತ್ತೇನೆ; ಅದನ್ನು ನೀವು ನಂಬಲಾರಿರಿ, ಇನ್ನೊಬ್ಬರು ವಿವರಿಸಿ ಹೇಳಿದರೂ ನಂಬಲಾರಿರಿ’, “ ಎಂದು ಹೇಳಿದನು.</verse>
				<verse number="42">ಪೌಲ ಮತ್ತು ಬಾರ್ನಬ ಪ್ರಾರ್ಥನಾಮಂದಿರವನ್ನು ಬಿಟ್ಟುಹೊರಟರು. “ಮುಂದಿನ ಸಬ್ಬತ್‍ದಿನ ಪುನಃ ಬಂದು ಈ ವಿಷಯಗಳ ಬಗ್ಗೆ ಹೆಚ್ಚು ತಿಳಿಸಿರಿ,” ಎಂದು ಜನರು ಕೇಳಿಕೊಂಡರು.</verse>
				<verse number="43">ಪ್ರಾರ್ಥನಾಕೂಟ ಮುಗಿದಮೇಲೆ ಅನೇಕ ಯೆಹೂದ್ಯರೂ ಯೆಹೂದ್ಯ ಮತಾವಲಂಬಿಗಳಾದ ಅನ್ಯರೂ ಪೌಲ ಮತ್ತು ಬಾರ್ನಬರನ್ನು ಹಿಂಬಾಲಿಸಿದರು. ಈ ಪ್ರೇಷಿತರು ಅವರೊಡನೆ ಮಾತನಾಡಿ ದೈವಾನುಗ್ರಹದಲ್ಲಿ ದೃಢವಾಗಿ ಬಾಳುವಂತೆ ಪ್ರೋತ್ಸಾಹಿಸಿದರು.</verse>
				<verse number="44">ಮುಂದಿನ ಸಬ್ಬತ್‍ದಿನ ದೇವರ ವಾಕ್ಯವನ್ನು ಕೇಳಲು ನಗರಕ್ಕೆ ನಗರವೇ ಆಗಮಿಸಿತು.</verse>
				<verse number="45">ಜನರು ತಂಡೋಪತಂಡವಾಗಿ ಬರುತ್ತಿರುವುದನ್ನು ಕಂಡು ಯೆಹೂದ್ಯರು ಮತ್ಸರಭರಿತರಾದರು. ಅವರು ಪೌಲನ ಮಾತುಮಾತಿಗೂ ವಿರೋಧವಾಗಿ ವಾದಿಸಿ ದೂಷಣೆಮಾಡತೊಡಗಿದರು.</verse>
				<verse number="46">ಪೌಲ ಮತ್ತು ಬಾರ್ನಬ ಮತ್ತಷ್ಟು ಧೈರ್ಯದಿಂದ ಮಾತನಾಡಿದರು: “ದೇವರ ವಾಕ್ಯವನ್ನು ಮೊಟ್ಟಮೊದಲು ನಿಮಗೆ ಬೋಧಿಸುವುದು ಅಗತ್ಯವಾಗಿತ್ತು. ಆದರೆ ನೀವು ಅದನ್ನು ನಿರಾಕರಿಸಿ ಅಮರಜೀವಕ್ಕೆ ಅಪಾತ್ರರೆಂದು ನಿಮ್ಮನ್ನು ನೀವೇ ತೀರ್ಮಾನಿಸಿಕೊಂಡಿರಿ. ಆದುದರಿಂದ ನಾವು ನಿಮ್ಮನ್ನು ಬಿಟ್ಟು ಅನ್ಯಧರ್ಮದವರ ಕಡೆ ಹೋಗುತ್ತೇವೆ.</verse>
				<verse number="47">ಏಕೆಂದರೆ ಪ್ರಭು ನಮಗಿತ್ತ ಆಜ್ಞೆ ಹೀಗಿದೆ: ಅನ್ಯಧರ್ಮೀಯರಿಗೆ ಜ್ಯೋತಿಯನ್ನಾಗಿಯೂ ವಿಶ್ವಪೂರ್ತಿಗೆ ಜೀವೋದ್ಧಾರದ ಸಾಧನವಾಗಿಯೂ ನಾನು ನಿನ್ನನ್ನು ನೇಮಿಸಿದ್ದೇನೆ.’</verse>
				<verse number="48">ಇದನ್ನು ಕೇಳಿದ ಅನ್ಯಧರ್ಮೀಯರು ಸಂತೋಷಪಟ್ಟು ದೇವರ ಸಂದೇಶಕ್ಕಾಗಿ ಸ್ತುತಿಸಿದರು. ಅಮರಜೀವಕ್ಕೆ ಆಯ್ಕೆಯಾದವರೆಲ್ಲರೂ ವಿಶ್ವಾಸಿಗಳಾದರು.</verse>
				<verse number="49">ಪ್ರಭುವಿನ ವಾಕ್ಯ ಆ ಪ್ರದೇಶದಲ್ಲೆಲ್ಲಾ ಹಬ್ಬಿ ಹರಡಿತು.</verse>
				<verse number="50">ಯೆಹೂದ್ಯರಾದರೋ ದೇವಭಕ್ತೆಯರಾದ ಕುಲೀನ ಸ್ತ್ರೀಯರನ್ನೂ ಪಟ್ಟಣದ ಪ್ರಮುಖ ಜನರನ್ನೂ ಪ್ರಚೋದಿಸಿದರು: ಪೌಲ ಮತ್ತು ಬಾರ್ನಬರನ್ನು ಹಿಂಸಿಸುವಂತೆ ಹುರಿದುಂಬಿಸಿ, ಅವರನ್ನು ಆ ಪ್ರದೇಶದಿಂದ ಹೊರಗಟ್ಟಿದರು.</verse>
				<verse number="51">ಇದಕ್ಕೆ ಪ್ರತಿಯಾಗಿ ಪ್ರೇಷಿತರು ತಮ್ಮ ಪಾದಧೂಳನ್ನು ಝಾಡಿಸಿ ಇಕೋನಿಯಕ್ಕೆ ಹೊರಟುಹೋದರು.</verse>
				<verse number="52">ಭಕ್ತ ವಿಶ್ವಾಸಿಗಳಾದರೋ ಪರಮಾನಂದಪಟ್ಟರು, ಪವಿತ್ರಾತ್ಮಭರಿತರಾದರು.</verse>
			</chapter>
			<chapter number="14">
				<verse number="1">ಇಕೋನಿಯದಲ್ಲೂ ಪೌಲ ಮತ್ತು ಬಾರ್ನಬ ಯೆಹೂದ್ಯರ ಪ್ರಾರ್ಥನಾಮಂದಿರಕ್ಕೆ ಹೋದರು. ಅವರ ಅಮೋಘ ಬೋಧನೆಯನ್ನು ಕೇಳಿ ಯೆಹೂದ್ಯರು ಮತ್ತು ಗ್ರೀಕರು ಬಹುಸಂಖ್ಯೆಯಲ್ಲಿ ಭಕ್ತವಿಶ್ವಾಸಿಗಳಾದರು.</verse>
				<verse number="2">ವಿಶ್ವಾಸಿಸಲೊಲ್ಲದ ಯೆಹೂದ್ಯರಾದರೋ ಅನ್ಯಧರ್ಮೀಯರನ್ನು ಪ್ರಚೋದಿಸಿ ಭಕ್ತರ ವಿರುದ್ಧ ಎತ್ತಿಕಟ್ಟಿದರು.</verse>
				<verse number="3">ಪ್ರೇಷಿತರಿಬ್ಬರೂ ಅಲ್ಲಿ ಬಹುಕಾಲವಿದ್ದು ಪ್ರಭುವನ್ನು ಕುರಿತು ಧೈರ್ಯವಾಗಿ ಬೋಧಿಸಿದರು. ಪ್ರಭು ಅವರಿಗೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುವ ಶಕ್ತಿಯನ್ನು ಕೊಟ್ಟರು. ಈ ಮೂಲಕ ದೇವಾನುಗ್ರಹದ ಬಗ್ಗೆ ಅವರ ಸಂದೇಶ ಸತ್ಯವಾದುದೆಂದು ವ್ಯಕ್ತಪಡಿಸಿದರು.</verse>
				<verse number="4">ಪಟ್ಟಣದ ಜನರಲ್ಲಿ ಭಿನ್ನಾಭಿಪ್ರಾಯ ಉಂಟಾಯಿತು. ಕೆಲವರು ಯೆಹೂದ್ಯರ ಪರವಾಗಿಯೂ ಮತ್ತೆ ಕೆಲವರು ಪ್ರೇಷಿತರ ಪರವಾಗಿಯೂ ವಿಂಗಡವಾಗಿ ಹೋದರು.</verse>
				<verse number="5">ಅನ್ಯಧರ್ಮದವರು ಮತ್ತು ಯೆಹೂದ್ಯರು ತಮ್ಮ ಅಧಿಕಾರಿಗಳೊಡನೆ ಸೇರಿ ಪ್ರೇಷಿತರಿಗೆ ಕಿರುಕುಳಕೊಡಲು ಹಾಗೂ ಅವರ ಮೇಲೆ ಕಲ್ಲು ತೂರಲು ಪ್ರಯತ್ನಿಸಿದರು.</verse>
				<verse number="6">ಇದನ್ನರಿತುಕೊಂಡ ಪ್ರೇಷಿತರು ಅಲ್ಲಿಂದ ಪಲಾಯನ ಮಾಡಿ ಲುಕವೋನಿಯದ ಪಟ್ಟಣಗಳಾದ ಲುಸ್ತ್ರ ಮತ್ತು ದೆರ್ಬೆಗೂ ಅದರ ಸುತ್ತಮುತ್ತಲ ಪ್ರದೇಶಗಳಿಗೂ ಹೊರಟುಹೋದರು.</verse>
				<verse number="7">ಅಲ್ಲೂ ಶುಭಸಂದೇಶವನ್ನು ಸಾರತೊಡಗಿದರು.</verse>
				<verse number="8">ಲುಸ್ತ್ರದಲ್ಲಿ ಒಬ್ಬ ಕುಂಟನಿದ್ದ. ಅವನೊಬ್ಬ ಹುಟ್ಟುಕುಂಟ. ಎಂದೂ ಕಾಲೂರಿ ನಡೆದವನಲ್ಲ.</verse>
				<verse number="9">ಒಮ್ಮೆ, ಅವನು ಕುಳಿತಲ್ಲೇ ಪೌಲನ ಮಾತುಗಳನ್ನು ಆಲಿಸುತ್ತಿದ್ದನು. ಆಗ ಪೌಲನು ಅವನನ್ನೇ ದಿಟ್ಟಿಸಿ ನೋಡಿದನು. ಅವನಲ್ಲಿ ಸ್ವಸ್ಥ ಪಡೆಯುವಷ್ಟು ವಿಶ್ವಾಸವನ್ನು ಕಂಡು ಸ್ವರವೆತ್ತಿ,</verse>
				<verse number="10">“ಎದ್ದೇಳು, ಕಾಲೂರಿ ನೆಟ್ಟಗೆ ನಿಲ್ಲು,” ಎಂದು ಹೇಳಿದನು. ಆ ಮನುಷ್ಯನು ನೆಗೆದುನಿಂತು ನಡೆಯಲಾರಂಭಿಸಿದನು.</verse>
				<verse number="11">ಪೌಲನು ಮಾಡಿದ ಈ ಮಹತ್ಕಾರ್ಯವನ್ನು ಜನಸಮೂಹವು ನೋಡಿತು. “ದೇವರುಗಳೇ ಮನುಷ್ಯರೂಪದಲ್ಲಿ ನಮ್ಮಲ್ಲಿಗೆ ಬಂದಿದ್ದಾರೆ,” ಎಂದು ತಮ್ಮ ಲುಕವೋನಿಯ ಭಾಷೆಯಲ್ಲಿ ಗಟ್ಟಿಯಾಗಿ ಕೂಗಲಾರಂಭಿಸಿದರು.</verse>
				<verse number="12">ಆ ಜನರು ಬಾರ್ನಬನನ್ನು ‘ಜೆಯುಸ್’ ದೇವರೆಂದೂ ಪೌಲನು ಮುಖ್ಯ ಭಾಷಣಕಾರನಾದುದರಿಂದ, ಅವನನ್ನು ‘ಹೆರ್ಮೆ’ ದೇವರೆಂದೂ ಕರೆಯಲಾರಂಭಿಸಿದರು.</verse>
				<verse number="13">ಆ ಜೆಯುಸ್ ದೇವರ ಗುಡಿ ಪಟ್ಟಣದ ಮುಂದೆಯೇ ಇತ್ತು. ಅಲ್ಲಿಯ ಅರ್ಚಕನು ದ್ವಾರದ ಬಳಿಗೆ ಹೋರಿಗಳನ್ನೂ ಹೂವಿನ ಹಾರಗಳನ್ನೂ ತೆಗೆದುಕೊಂಡು ಬಂದನು. ಜನರೊಡನೆ ಸೇರಿ ಪ್ರೇಷಿತರಿಗೆ ಬಲಿಯನ್ನು ಅರ್ಪಿಸಬೇಕೆಂದಿದ್ದನು.</verse>
				<verse number="14">ಇದನ್ನು ಕೇಳಿದ ಬಾರ್ನಬ ಮತ್ತು ಪೌಲರು ಸಿಟ್ಟಿನಿಂದ ತಮ್ಮ ಮೇಲಂಗಿಗಳನ್ನು ಹರಿದು, ಜನಸಂದಣಿಯತ್ತ ಧಾವಿಸಿ ಹೀಗೆಂದು ಕೂಗಿಹೇಳಿದರು:</verse>
				<verse number="15">“ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು.</verse>
				<verse number="16">ಹಿಂದಿನ ಕಾಲದಲ್ಲಿ ಸಮಸ್ತ ಜನಾಂಗಗಳು ತಮಗೆ ಇಷ್ಟಬಂದಂತೆ ನಡೆಯಲೆಂದು ದೇವರು ಬಿಟ್ಟುಬಿಟ್ಟರು.</verse>
				<verse number="17">ಆದರೆ ತಮ್ಮ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಸಾಕ್ಷ್ಯ ನೀಡುತ್ತಲೇ ಬಂದಿದ್ದಾರೆ; ನಿಮಗೆ ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ ಬೆಳೆಯನ್ನೂ ಕೊಡುತ್ತಾ ಆಹಾರವನ್ನು ಒದಗಿಸಿ, ನಿಮ್ಮ ಹೃದಯವನ್ನು ಪರಮಾನಂದಗೊಳಿಸುತ್ತಾ ಬಂದಿದ್ದಾರೆ.”</verse>
				<verse number="18">ಪ್ರೇಷಿತರು ಇಷ್ಟು ಹೇಳಿದರೂ ಜನರು ತಮಗೆ ಬಲಿಯರ್ಪಿಸುವುದನ್ನು ತಡೆಯುವುದು ಕಷ್ಟಸಾಧ್ಯವಾಯಿತು.</verse>
				<verse number="19">ಆಗ ಅಂತಿಯೋಕ್ಯ ಮತ್ತು ಇಕೋನಿಯದಿಂದ ಕೆಲವು ಯೆಹೂದ್ಯರು ಅಲ್ಲಿಗೆ ಬಂದರು. ಅವರು ಜನಸಮೂಹವನ್ನು ತಮ್ಮಕಡೆ ಒಲಿಸಿಕೊಂಡು ಪೌಲನ ಮೇಲೆ ಕಲ್ಲುಬೀರಿ, ಅವನು ಸತ್ತನೆಂದು ಭಾವಿಸಿ, ಪಟ್ಟಣದಿಂದ ಹೊರಗೆ ಎಳೆದುಹಾಕಿದರು.</verse>
				<verse number="20">ಆದರೆ, ಭಕ್ತವಿಶ್ವಾಸಿಗಳು ಬಂದು ಅವನ ಸುತ್ತಲೂ ನೆರೆದಿದ್ದಾಗ ಅವನು ಎದ್ದು ಪಟ್ಟಣವನ್ನು ಪ್ರವೇಶಿಸಿದನು. ಮರುದಿನ ಅವನು ಬಾರ್ನಬನ ಸಂಗಡ ದೆರ್ಬೆಗೆ ಹೊರಟುಹೋದನು.</verse>
				<verse number="21">ದೆರ್ಬೆಯಲ್ಲಿ ಪೌಲ ಮತ್ತು ಬಾರ್ನಬ ಶುಭಸಂದೇಶವನ್ನು ಸಾರಿ ಅನೇಕರನ್ನು ಭಕ್ತವಿಶ್ವಾಸಿಗಳನ್ನಾಗಿ ಮಾಡಿಕೊಂಡರು. ಅನಂತರ ಅಲ್ಲಿಂದ ಲುಸ್ತ್ರಕ್ಕೂ ಇಕೋನಿಯಕ್ಕೂ ಅಂತಿಯೋಕ್ಯಕ್ಕೂ ಹಿಂದಿರುಗಿ ಬಂದರು.</verse>
				<verse number="22">ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.</verse>
				<verse number="23">ಇದಲ್ಲದೆ ಪ್ರತಿಯೊಂದು ಕ್ರೈಸ್ತಸಭೆಗೂ ಪ್ರಮುಖರನ್ನು ನೇಮಿಸಿದರು. ಪ್ರಾರ್ಥನೆ ಮತ್ತು ಉಪವಾಸಮಾಡಿ ತಾವು ಅಚಲವಾಗಿ ನಂಬಿದ್ದ ಪ್ರಭುವಿಗೆ ಅವರನ್ನು ಒಪ್ಪಿಸಿದರು.</verse>
				<verse number="24">ಇದಾದ ಮೇಲೆ ಪಿಸಿದಿಯ ಪ್ರದೇಶವನ್ನು ದಾಟಿ ಪಾಂಫೀಲಿಯ ಎಂಬಲ್ಲಿಗೆ ಬಂದರು.</verse>
				<verse number="25">ಪೆರ್ಗದಲ್ಲಿ ಶುಭಸಂದೇಶವನ್ನು ಸಾರಿ ಅತ್ತಾಲಿಯ ಎಂಬಲ್ಲಿಗೆ ಹೋದರು.</verse>
				<verse number="26">ಅಲ್ಲಿಂದ ನೌಕಾಯಾನಮಾಡಿ ಅವರು ಅಂತಿಯೋಕ್ಯಕ್ಕೆ ಮರಳಿದರು. ಈವರೆಗೆ ಮಾಡಿ ಮುಗಿಸಿದ್ದ ಸೇವಾಕಾರ್ಯಕ್ಕಾಗಿ ಅವರು ದೇವರ ಕೃಪಾಶ್ರಯಕ್ಕೆ ಮೊದಲು ಸಮರ್ಪಿತರಾದದ್ದು ಇಲ್ಲಿಯೇ.</verse>
				<verse number="27">ಇಲ್ಲಿಗೆ ತಲುಪಿದ ಕೂಡಲೇ ಅವರು ಕ್ರೈಸ್ತಸಭೆಯನ್ನು ಒಟ್ಟುಗೂಡಿಸಿದರು. ದೇವರು ತಮ್ಮೊಡನೆ ಇದ್ದು ಸಾಧಿಸಿದ್ದೆಲ್ಲವನ್ನೂ ವರದಿಮಾಡಿದರು; ಅದೂ ಅಲ್ಲದೆ, ದೇವರು ಅನ್ಯಧರ್ಮೀಯರಿಗೆ ವಿಶ್ವಾಸದ ದ್ವಾರವನ್ನು ಹೇಗೆ ತೆರೆದರೆಂದು ವಿವರಿಸಿದರು.</verse>
				<verse number="28">ತರುವಾಯ ಭಕ್ತವಿಶ್ವಾಸಿಗಳ ಸಂಗಡ ಹೆಚ್ಚುಕಾಲ ತಂಗಿದ್ದರು.</verse>
			</chapter>
			<chapter number="15">
				<verse number="1">ಜುದೇಯದಿಂದ ಕೆಲವು ಜನರು ಅಂತಿಯೋಕ್ಯಕ್ಕೆ ಬಂದು ಅಲ್ಲಿನ ಭಕ್ತ ವಿಶ್ವಾಸಿಗಳಿಗೆ, “ಮೋಶೆಯ ನಿಯಮದಂತೆ ನೀವು ಸುನ್ನತಿ ಮಾಡಿಸಿಕೊಂಡ ಹೊರತು ಜೀವೋದ್ಧಾರ ಪಡೆಯಲಾರಿರಿ,” ಎಂದು ಬೋಧಿಸತೊಡಗಿದರು.</verse>
				<verse number="2">ಈ ವಿಷಯವಾಗಿ ಅವರಿಗೂ ಪೌಲ ಮತ್ತು ಬಾರ್ನಬರಿಗೂ ಭಿನ್ನಾಭಿಪ್ರಾಯ ಉಂಟಾಗಿ ತೀವ್ರ ವಿವಾದವೆದ್ದಿತು. ಆದುದರಿಂದ ಈ ಸಮಸ್ಯೆಯ ಬಗ್ಗೆ ಪೌಲ ಮತ್ತು ಬಾರ್ನಬರು ಅಂತಿಯೋಕ್ಯದ ಇನ್ನೂ ಕೆಲವರ ಸಮೇತ ಜೆರುಸಲೇಮಿಗೆ ಹೋಗಿ ಪ್ರೇಷಿತರನ್ನೂ ಪ್ರಮುಖರನ್ನೂ ಕಾಣಬೇಕೆಂದು ತೀರ್ಮಾನಿಸಲಾಯಿತು.</verse>
				<verse number="3">ಅಂತೆಯೇ ಕ್ರೈಸ್ತಸಭೆ ಅವರನ್ನು ಬೀಳ್ಕೊಟ್ಟಿತು. ಅವರು ಫೆನಿಷ್ಯ ಹಾಗೂ ಸಮಾರಿಯದ ಮಾರ್ಗವಾಗಿ ಪ್ರಯಾಣಮಾಡುತ್ತಾ ಅಲ್ಲಿಯ ಭಕ್ತವಿಶ್ವಾಸಿಗಳಿಗೆ ಅನ್ಯಧರ್ಮೀಯರು ಹೇಗೆ ಕ್ರೈಸ್ತರಾದರೆಂಬುದನ್ನು ವಿವರಿಸಿದರು. ಇದನ್ನು ಕೇಳಿದ ಭಕ್ತಾದಿಗಳು ಸಂತೋಷಭರಿತರಾದರು.</verse>
				<verse number="4">ಪೌಲ, ಬಾರ್ನಬ ಮತ್ತು ಸಂಗಡಿಗರು ಜೆರುಸಲೇಮಿಗೆ ಆಗಮಿಸಿದಾಗ, ಅಲ್ಲಿಯ ಕ್ರೈಸ್ತಸಭೆ ಪ್ರೇಷಿತರ ಹಾಗೂ ಪ್ರಮುಖರ ಸಮೇತ ಅವರನ್ನು ಸ್ವಾಗತಿಸಿತು. ಆಗ ಅವರು, ದೇವರು ತಮ್ಮೊಡನೆ ಇದ್ದು, ಸಾಧಿಸಿದ ಎಲ್ಲಾ ಕಾರ್ಯಗಳನ್ನು ವರದಿಮಾಡಿದರು.</verse>
				<verse number="5">ಫರಿಸಾಯ ಪಂಥಕ್ಕೆ ಸೇರಿದ ಕೆಲವು ಭಕ್ತರು ಮಾತ್ರ ಎದ್ದುನಿಂತು, ಅನ್ಯಧರ್ಮೀಯರು ಸುನ್ನತಿಮಾಡಿಸಿಕೊಳ್ಳಲೇಬೇಕು, ಅವರು ಮೋಶೆಯ ನಿಯಮಗಳನ್ನು ಅನುಸರಿಸುವಂತೆ ಆಜ್ಞೆ ಮಾಡಲೇಬೇಕು,” ಎಂದರು.</verse>
				<verse number="6">ಈ ಸಮಸ್ಯೆಯನ್ನು ಪರಿಶೀಲಿಸಲು ಪ್ರೇಷಿತರು ಮತ್ತು ಸಭಾಪ್ರಮುಖರು ಸಭೆ ಸೇರಿದರು.</verse>
				<verse number="7">ಸುದೀರ್ಘ ಚರ್ಚೆಯಾದ ನಂತರ ಪೇತ್ರನು ಎದ್ದುನಿಂತು ಹೀಗೆಂದನು: “ಸಹೋದರರೇ, ಅನ್ಯಧರ್ಮೀಯರು ಶುಭಸಂದೇಶವನ್ನು ನನ್ನ ಬಾಯಿಯಿಂದ ಕೇಳಿ ವಿಶ್ವಾಸಿಸಲೆಂದು ದೇವರು ನಿಮ್ಮ ಮಧ್ಯೆಯಿಂದ ನನ್ನನ್ನು ಬಹುದಿನಗಳ ಹಿಂದೆಯೇ ಆರಿಸಿಕೊಂಡರು. ಇದು ನಿಮಗೆ ತಿಳಿದ ವಿಷಯ.</verse>
				<verse number="8">ಮಾನವನ ಅಂತರಂಗವನ್ನು ಅರಿತ ದೇವರು ನಿಮಗೆ ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮ ಅವರನ್ನು ಕೊಟ್ಟರು. ಅವರೂ ತಮ್ಮವರೇ ಎಂದು ವ್ಯಕ್ತಪಡಿಸಿದರು.</verse>
				<verse number="9">ಅವರಿಗೂ ನಮಗೂ ಯಾವ ಭೇದಭಾವವನ್ನು ತೋರಿಸದೆ ವಿಶ್ವಾಸದ ನಿಮಿತ್ತ ದೇವರು ಅವರ ಪಾಪಗಳನ್ನು ಕ್ಷಮಿಸಿದರು.</verse>
				<verse number="10">ಆದುದರಿಂದ ನಮ್ಮ ಪೂರ್ವಜರಿಂದಾಗಲೀ ನಮ್ಮಿಂದಾಗಲೀ ಹೊರಲಾಗದಂಥ ಹೊರೆಯನ್ನು ಈ ಅನುಯಾಯಿಗಳ ಮೇಲೆ ಏಕೆ ಹೊರಿಸುತ್ತೀರಿ? ಹೀಗೆ ದೇವರನ್ನೇಕೆ ಕೆಣಕುತ್ತೀರಿ?</verse>
				<verse number="11">ಇಲ್ಲ, ಇದು ಸರಿಯಲ್ಲ. ನಮಗೇ ಆಗಲಿ, ಅವರಿಗೇ ಆಗಲಿ, ಜೀವೋದ್ಧಾರ ದೊರಕುವುದು ಪ್ರಭು ಯೇಸುವಿನ ಅನುಗ್ರಹದಿಂದಲೇ. ಇದೇ ನಮ್ಮ ವಿಶ್ವಾಸ.”</verse>
				<verse number="12">ಇದನ್ನು ಕೇಳಿದ್ದೇ, ಸಭೆ ಸೇರಿದ್ದವರೆಲ್ಲರೂ ಮೌನರಾದರು. ಪೌಲ ಮತ್ತು ಬಾರ್ನಬರಿಗೆ ಕಿವಿಗೊಟ್ಟರು. ದೇವರು ಅವರ ಮುಖಾಂತರ ಅನ್ಯಧರ್ಮೀಯರ ಮಧ್ಯೆ ಎಸಗಿದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕುರಿತು ಕೇಳಿದರು.</verse>
				<verse number="13">ಇದಾದ ಮೇಲೆ ಯಕೋಬನು ಎದ್ದು ಹೀಗೆಂದನು: “ಸಹೋದರರೇ ಕೇಳಿ,</verse>
				<verse number="14">ದೇವರು ಈ ಮೊದಲೇ ಅನ್ಯಧರ್ಮೀಯರಲ್ಲಿ ಆಸಕ್ತಿಗೊಂಡು ಅವರಿಂದಲೂ ಸ್ವಂತ ಪ್ರಜೆಯನ್ನು ಆರಿಸಿಕೊಂಡಿದ್ಧಾನೆ, ಎಂಬ ವಿಷಯವನ್ನು ಸಿಮೋನನು ಈಗ ತಾನೇ ವಿವರಿಸಿದ್ದಾನೆ.</verse>
				<verse number="15">ಇದಕ್ಕೂ ಪ್ರವಾದಿಗಳ ಪ್ರವಚನಗಳಿಗೂ ಪೂರ್ಣಸಾಮರಸ್ಯವಿದೆ.</verse>
				<verse number="16">‘ಅಳಿದುಹೋದ ದಾವೀದನ ಮನೆತನವನು ಪುನರ್‍ಸ್ಥಾಪಿಸಲು ಮರಳಿ ಬರುವೆನು ಪಾಳುಬಿದ್ದುದನು ಜೀರ್ಣೋದ್ಧಾರಗೊಳಿಸುವೆನು ಸುಭದ್ರವಾಗಿ ನಿಲ್ಲಿಸುವೆನು ಅದನ್ನು.</verse>
				<verse number="17">ನನ್ನವರೆಂದು ನಾನು ಕರೆದ ಎಲ್ಲ ಅನ್ಯಧರ್ಮೀಯರು ಉಳಿದೆಲ್ಲ ಮಾನವರು ನನ್ನತ್ತ ಬರಲಿಹರು</verse>
				<verse number="18">ಎಂಬೀ ಸರ್ವೇಶ್ವರನ ನುಡಿ ಎಂದಿನಿಂದಲೋ ತಿಳಿದಿಹುದು.’</verse>
				<verse number="19">“ಆದುದರಿಂದ ನನ್ನ ತೀರ್ಮಾನವೇನೆಂದರೆ: ದೇವರ ಕಡೆಗೆ ತಿರುಗುತ್ತಿರುವ ಅನ್ಯಧರ್ಮೀಯರನ್ನು ತೊಂದರೆಗೆ ಈಡುಮಾಡಬಾರದು.</verse>
				<verse number="20">ಅದಕ್ಕೆ ಬದಲಾಗಿ ನಾವು ಅವರಿಗೆ ಪತ್ರ ಬರೆದು, ‘ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು; ಅದನ್ನು ಸೇವಿಸಬಾರದು; ಅನೈತಿಕತೆಯಿಂದ ದೂರವಿರಬೇಕು; ರಕ್ತವನ್ನಾಗಲಿ, ಕುತ್ತಿಗೆ ಹಿಸುಕಿದ ಪ್ರಾಣಿಗಳನ್ನಾಗಲಿ ತಿನ್ನಬಾರದು,’ ಎಂದು ತಿಳುವಳಿಕೆ ಕೊಡಬೇಕು.</verse>
				<verse number="21">ಏಕೆಂದರೆ ಪುರಾತನ ಕಾಲದಿಂದಲೂ ಪ್ರತಿಯೊಂದು ಸಬ್ಬತ್‍ದಿನ ಮೋಶೆಯ ಧರ್ಮಶಾಸ್ತ್ರವನ್ನು ಪ್ರಾರ್ಥನಾಮಂದಿರಗಳಲ್ಲಿ ಓದಲಾಗುತ್ತಿದೆ ಮತ್ತು ಆತನ ಬೋಧನೆಯನ್ನು ಪ್ರತಿ ನಗರದಲ್ಲೂ ಸಾರಲಾಗುತ್ತಿದೆ,” ಎಂದನು.</verse>
				<verse number="22">ಅನಂತರ ಪ್ರೇಷಿತರೂ ಸಭಾಪ್ರಮುಖರೂ ಇಡೀ ಧರ್ಮಸಭೆಯ ಸಮ್ಮತಿಪಡೆದು, ತಮ್ಮಲ್ಲಿ ಕೆಲವರನ್ನು ಆರಿಸಿ, ಪೌಲ ಮತ್ತು ಬಾರ್ಸಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಬೇಕೆಂದು ನಿರ್ಧರಿಸಿದರು. ಅಂತೆಯೇ, ಸಹೋದರರಲ್ಲಿ ಬಹು ಗೌರವಾನ್ವಿತರಾದ ಬಾರ್ನಬ ಎಂದು ಕರೆಯಲಾದ ಯೂದ ಮತ್ತು ಸೀಲ ಎಂಬ ಇಬ್ಬರನ್ನು ಆರಿಸಿದರು. ಈ ಕೆಳಗಿನ ಪತ್ರವನ್ನು ಬರೆದು ಅವರ ಕೈಯಲ್ಲಿ ಕಳುಹಿಸಿದರು.</verse>
				<verse number="23">“ಅಂತಿಯೋಕ್ಯ, ಸಿರಿಯ ಮತ್ತು ಸಿಲಿಸಿಯಗಳಲ್ಲಿ ವಾಸಿಸುವ ಯೆಹೂದ್ಯೇತರ ಸಹೋದರರಿಗೆ - ಪ್ರೇಷಿತರೂ ಸಭಾಪ್ರಮುಖರೂ ನಿಮ್ಮ ಸಹೋದರರೂ ಆದ ನಮ್ಮ ಶುಭಾಶಯಗಳು!</verse>
				<verse number="24">ನಮ್ಮ ಕಡೆಯ ಕೆಲವು ಜನರು ನಮ್ಮಿಂದ ಯಾವ ಆದೇಶವನ್ನೂ ಪಡೆಯದೆ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮ ಮನಸ್ಸನ್ನು ಕಲಕಿದರೆಂಬ ಸಮಾಚಾರ ನಮ್ಮ ಗಮನಕ್ಕೆ ಬಂದಿದೆ.</verse>
				<verse number="25">ಆದುದರಿಂದ ನಾವೆಲ್ಲರೂ ಸಭೆಸೇರಿ ಪ್ರತಿನಿಧಿಗಳನ್ನು ಆರಿಸಿ ನಿಮ್ಮಲ್ಲಿಗೆ ಕಳುಹಿಸಲು ನಿರ್ಧರಿಸಿದೆವು.</verse>
				<verse number="26">ನಮ್ಮ ಪ್ರಭುವಾದ ಯೇಸುಕ್ರಿಸ್ತರಿಗಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟಿರುವ ನಮ್ಮೊಲವಿನ ಬಾರ್ನಬ ಮತ್ತು ಪೌಲರೊಡನೆ ಈ ಪ್ರತಿನಿಧಿಗಳು ಬರುತ್ತಿದ್ದಾರೆ.</verse>
				<verse number="27">ಇವರೇ ನಾವು ಕಳುಹಿಸುತ್ತಿರುವ ಯೂದ ಮತ್ತು ಸೀಲ. ಇವರು ನಾವು ಬರೆದಿರುವುದನ್ನು ನಿಮಗೆ ಖುದ್ದಾಗಿ ತಿಳಿಸುವರು.</verse>
				<verse number="28">ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು. ಅದನ್ನು ಸೇವಿಸಬಾರದು; ರಕ್ತವನ್ನಾಗಲಿ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳನ್ನಾಗಲಿ ತಿನ್ನಬಾರದು; ಅನೈತಿಕತೆಯಿಂದ ದೂರವಿರಬೇಕು. ಈ ಅಗತ್ಯ ನಿಯಮಗಳ ಹೊರತು ಬೇರೆ ಯಾವ ಹೊರೆಯನ್ನೂ ನಿಮ್ಮ ಮೇಲೆ ಹೇರುವುದು ವಿಹಿತವಲ್ಲವೆಂಬುದು ಪವಿತ್ರಾತ್ಮ ಅವರ ಹಾಗೂ ನಮ್ಮ ತೀರ್ಮಾನ. ಈ ನಿಯಮಗಳನ್ನು ಅನುಸರಿಸಿದರೆ, ನಿಮಗೆ ಒಳಿತಾಗುವುದು, ನಿಮಗೆ ಶುಭವಾಗಲಿ!”</verse>
				<verse number="29"></verse>
				<verse number="30">ಅಂತೆಯೇ ಪ್ರತಿನಿಧಿಗಳು ಅಲ್ಲಿಂದ ಅಪ್ಪಣೆಪಡೆದು ಅಂತಿಯೋಕ್ಯಕ್ಕೆ ಹೋದರು. ಅಲ್ಲಿ ಭಕ್ತಸಭೆಯನ್ನು ಒಟ್ಟುಗೂಡಿಸಿ ಅವರಿಗೆ ಆ ಪತ್ರವನ್ನು ಕೊಟ್ಟರು.</verse>
				<verse number="31">ಪತ್ರದಲ್ಲಿದ್ದ ಪ್ರೋತ್ಸಾಹದಾಯಕ ಸಂದೇಶವನ್ನು ಓದಿದ್ದೇ - ಭಕ್ತಾದಿಗಳು ಆನಂದಭರಿತರಾದರು.</verse>
				<verse number="32">ಸೀಲ ಮತ್ತು ಯೂದ ಸ್ವತಃ ಪ್ರವಾದಿಗಳಾದುದರಿಂದ ಸುದೀರ್ಘ ಮಾತುಕತೆಗಳಿಂದ ಭಕ್ತರಲ್ಲಿ ಧೈರ್ಯಸ್ಥೈರ್ಯವನ್ನು ಉಂಟುಮಾಡಿದರು.</verse>
				<verse number="33">ಕೆಲವು ದಿನಗಳಾದ ಮೇಲೆ ಅಲ್ಲಿಯ ಭಕ್ತರನ್ನು ಬೀಳ್ಕೊಟ್ಟು ತಮ್ಮನ್ನು ಕಳುಹಿಸಿದವರ ಬಳಿಗೆ ಹಿಂದಿರುಗಲು ಸಿದ್ಧರಾದರು.</verse>
				<verse number="34">ಸೀಲನಾದರೋ ಅಲ್ಲೇ ಉಳಿದುಕೊಳ್ಳಲು ನಿರ್ಧರಿಸಿದನು.</verse>
				<verse number="35">ಇತ್ತ ಪೌಲ ಮತ್ತು ಬಾರ್ನಬ ಅಂತಿಯೋಕ್ಯದಲ್ಲೇ ತಂಗಿದ್ದು ಅನೇಕರೊಡಗೂಡಿ ಪ್ರಭುವಿನ ವಾಕ್ಯವನ್ನು ಬೋಧಿಸುತ್ತಾ ಶುಭಸಂದೇಶವನ್ನು ಸಾರುತ್ತಾ ಇದ್ದರು.</verse>
				<verse number="36">ಕೆಲವು ಕಾಲದ ನಂತರ ಪೌಲನು, “ನಾವು ಪ್ರಭುವಿನ ವಾಕ್ಯವನ್ನು ಈಗಾಗಲೇ ಬೋಧಿಸಿದ ಪ್ರತಿಯೊಂದು ಪಟ್ಟಣಗಳಿಗೆ ಪುನಃ ಹೋಗೋಣ. ಅಲ್ಲಿ ನಮ್ಮ ಸಹೋದರರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿ ಬರೋಣ ಬಾ,” ಎಂದು ಬಾರ್ನಬನನ್ನು ಕರೆದನು.</verse>
				<verse number="37">ಮಾರ್ಕನೆಂದು ಹೆಸರುಗೊಂಡ ಯೊವಾನ್ನನನ್ನು ತಮ್ಮ ಸಂಗಡ ಕರೆದುಕೊಂಡು ಹೋಗಬೇಕೆಂಬುದು ಬಾರ್ನಬನ ಇಷ್ಟವಾಗಿತ್ತು.</verse>
				<verse number="38">ಆದರೆ ಪಾಂಫೀಲಿಯದಲ್ಲಿ ಇದ್ದಾಗ ಧರ್ಮಪ್ರಚಾರ ಕಾರ್ಯದಲ್ಲಿ ಸಹಕರಿಸದೆ ತಮ್ಮನ್ನು ಬಿಟ್ಟಗಲಿದ ಅವನನ್ನು ಜೊತೆಯಲ್ಲಿ ಕರೆದುಕೊಂಡು ಹೋಗುವುದು ಉಚಿತವಲ್ಲವೆಂಬುದು ಪೌಲನ ಅಭಿಪ್ರಾಯ.</verse>
				<verse number="39">ಹೀಗೆ ಇವರಿಬ್ಬರಲ್ಲಿ ತೀವ್ರ ವಾಗ್ವಾದ ಉಂಟಾಯಿತು. ಒಬ್ಬರನ್ನೊಬ್ಬರು ಬಿಟ್ಟು ಅಗಲಬೇಕಾಯಿತು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸೈಪ್ರಸ್ ದ್ವೀಪಕ್ಕೆ ನೌಕಾಯಾನ ಮಾಡಿದನು.</verse>
				<verse number="40">ಪೌಲನು ಸೀಲನನ್ನು ಆರಿಸಿಕೊಂಡು ಅವನೊಡನೆ ತೆರಳಿದನು. ಸಹೋದರರು ಅವನನ್ನು ಪ್ರಭುವಿನ ಕೃಪಾಶ್ರಯಕ್ಕೆ ಒಪ್ಪಿಸಿ ಕಳುಹಿಸಿಕೊಟ್ಟರು.</verse>
				<verse number="41">ಅವನು ಸಿರಿಯ ಮತ್ತು ಸಿಲಿಸಿಯಗಳನ್ನು ಹಾದುಹೋಗುತ್ತಾ, ಅಲ್ಲಿದ್ದ ಕ್ರೈಸ್ತಸಭೆಗಳನ್ನು ದೃಢಪಡಿಸುತ್ತಾ ಪ್ರಯಾಣ ಬೆಳೆಸಿದನು.</verse>
			</chapter>
			<chapter number="16">
				<verse number="1">ಪೌಲನು ದೆರ್ಬೆಗೂ ಅಲ್ಲಿಂದ ಲುಸ್ತ್ರಕ್ಕೂ ಪ್ರಯಾಣಮಾಡಿದನು. ತಿಮೊಥೇಯ ಎಂಬ ಕ್ರೈಸ್ತಭಕ್ತನು ಅಲ್ಲಿ ವಾಸಿಸುತ್ತಿದ್ದನು. ಇವನ ತಾಯಿ ಯೆಹೂದ್ಯಳು ಹಾಗೂ ಕ್ರೈಸ್ತಭಕ್ತಳು. ತಂದೆಯಾದರೋ ಗ್ರೀಕನು.</verse>
				<verse number="2">ಲುಸ್ತ್ರ ಮತ್ತು ಇಕೋನಿಯದ ಸಹೋದರರೆಲ್ಲರಿಗೆ ತಿಮೊಥೇಯನ ಬಗ್ಗೆ ಸದಭಿಪ್ರಾಯವಿತ್ತು.</verse>
				<verse number="3">ಪೌಲನು ತಿಮೊಥೇಯನನ್ನು ತನ್ನೊಡನೆ ಕರೆದುಕೊಂಡು ಹೋಗಲು ಅಪೇಕ್ಷಿಸಿದನು. ಆ ಪ್ರದೇಶಗಳಲ್ಲಿದ್ದ ಯೆಹೂದ್ಯರಿಗೆ ತಿಮೊಥೇಯನ ತಂದೆ ಗ್ರೀಕನೆಂದು ತಿಳಿದಿದ್ದುದರಿಂದ ಅವನಿಗೆ ಸುನ್ನತಿಮಾಡಿಸಿದನು.</verse>
				<verse number="4">ಊರಿಂದ ಊರಿಗೆ ಪ್ರಯಾಣ ಮಾಡುತ್ತಾ, ಜೆರುಸಲೇಮಿನಲ್ಲಿದ್ದ ಪ್ರೇಷಿತರೂ ಸಭಾಪ್ರಮುಖರೂ ನಿರ್ಧರಿಸಿದ ನಿಯಮಗಳನ್ನು ಭಕ್ತರಿಗೆ ಬೋಧಿಸುತ್ತಾ, ಅವುಗಳನ್ನು ಪಾಲಿಸುವಂತೆ ಹೇಳಿದರು.</verse>
				<verse number="5">ಹೀಗೆ ಕ್ರೈಸ್ತಸಭೆಗಳು ವಿಶ್ವಾಸದಲ್ಲಿ ದೃಢಗೊಂಡು ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಬೆಳೆಯತೊಡಗಿತು.</verse>
				<verse number="6">ಏಷ್ಯದಲ್ಲಿ ಅವರು ಶುಭಸಂದೇಶವನ್ನು ಸಾರಕೂಡದೆಂದು ಪವಿತ್ರಾತ್ಮ ನಿಷೇಧಿಸಿದ್ದರಿಂದ ಅವರು ಫ್ರಿಜಿಯ ಮತ್ತು ಗಲಾತ್ಯಪ್ರದೇಶಗಳ ಮಾರ್ಗವಾಗಿ ಪ್ರಯಾಣಮಾಡಿದರು.</verse>
				<verse number="7">ಮೂಸಿಯದ ಗಡಿಯನ್ನು ತಲುಪಿದಾಗ ಅವರು ಬಿಥೂನಿಯ ಪ್ರಾಂತ್ಯಕ್ಕೆ ಹೋಗಲು ಯತ್ನಿಸಿದರು. ಯೇಸುವಿನ ಆತ್ಮ ಅಲ್ಲಿಗೆ ಹೋಗಲು ಸಹ ಅವರನ್ನು ಬಿಡಲಿಲ್ಲ.</verse>
				<verse number="8">ಆದುದರಿಂದ ಅವರು ಮೂಸಿಯವನ್ನು ಹಾದು ನೇರವಾಗಿ ತ್ರೋವಕ್ಕೆ ಹೋದರು.</verse>
				<verse number="9">ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು; ಮಕೆದೋನಿಯದ ಒಬ್ಬ ವ್ಯಕ್ತಿ ಅಲ್ಲಿ ನಿಂತು, “ಮಕೆದೋನಿಯಕ್ಕೆ ಬಂದು ನಮಗೆ ಸಹಾಯಮಾಡಿ,” ಎಂದು ಅಂಗಲಾಚಿದನು.</verse>
				<verse number="10">ಪೌಲನಿಗೆ ಈ ದರ್ಶನವಾದ ತಕ್ಷಣ ಆ ಜನರಿಗೆ ಶುಭಸಂದೇಶವನ್ನು ಸಾರಲು ದೇವರು ನಮ್ಮನ್ನು ಕರೆದಿದ್ದಾರೆಂದು ನಾವು ಅರಿತುಕೊಂಡು ಮಕೆದೋನಿಯಕ್ಕೆ ಹೋಗಲು ಸಿದ್ಧರಾದೆವು.</verse>
				<verse number="11">ನಾವು ತ್ರೋವದಲ್ಲಿ ಹಡಗು ಹತ್ತಿ ಸಮೊಥ್ರಕ್ಕೆ ನೇರವಾಗಿ ಪ್ರಯಾಣಮಾಡಿದೆವು. ಮಾರನೆಯ ದಿನ ನೆಯಫೋಲನ್ನು ತಲುಪಿ,</verse>
				<verse number="12">ಅಲ್ಲಿಂದ ಮಕೆದೋನಿಯದ ಪ್ರಮುಖ ಪಟ್ಟಣವಾದ ಫಿಲಿಪ್ಪಿಗೆ ಬಂದೆವು. ಇದು ರೋಮಿನ ವಸಾಹತು; ಇಲ್ಲಿ ಕೆಲವು ದಿನಗಳನ್ನು ಕಳೆದೆವು.</verse>
				<verse number="13">ಪಟ್ಟಣದ ಹೊರಗಿರುವ ನದಿತೀರದ ಬಳಿ ಯೆಹೂದ್ಯರ ಪ್ರಾರ್ಥನಾ ಸ್ಥಳವಿರಬಹುದೆಂದು ಭಾವಿಸಿ ಸಬ್ಬತ್‍ದಿನ ಅಲ್ಲಿಗೆ ಹೋದೆವು. ನಾವು ಕುಳಿತುಕೊಂಡು ಅಲ್ಲಿ ಸೇರಿದ್ದ ಮಹಿಳೆಯರೊಡನೆ ಸಂಭಾಷಿಸಿದೆವು.</verse>
				<verse number="14">ನಮ್ಮ ಬೋಧನೆಯನ್ನು ಕೇಳಿದ ಆ ಮಹಿಳೆಯರಲ್ಲಿ ಲಿಡಿಯ ಎಂಬವಳು ಒಬ್ಬಳು. ಈಕೆ ಥುವತೈರ ಎಂಬ ಊರಿನವಳು; ಪಟ್ಟೆಪೀತಾಂಬರಗಳ ವ್ಯಾಪಾರಿ ಹಾಗೂ ದೇವಭಕ್ತೆ. ಪೌಲನ ಬೋಧನೆಗೆ ಕಿವಿಗೊಟ್ಟು ಗ್ರಹಿಸುವಂತೆ ಪ್ರಭು ಆಕೆಯ ಹೃದಯವನ್ನು ತೆರೆದರು.</verse>
				<verse number="15">ಅಂತೆಯೇ ತನ್ನ ಮನೆಯವರ ಸಮೇತ ದೀಕ್ಷಾಸ್ನಾನವನ್ನು ಪಡೆದಳು. ಅನಂತರ, “ನಾನು ಪ್ರಭುವಿನ ನಿಜವಾದ ವಿಶ್ವಾಸಿಯೆಂದು ನೀವು ಒಪ್ಪಿಕೊಳ್ಳುವುದಾದರೆ ನನ್ನ ಮನೆಗೆ ಬಂದು ತಂಗಿರಿ,” ಎಂದು ನಮ್ಮನ್ನು ಒತ್ತಾಯಪೂರ್ವಕವಾಗಿ ಆಹ್ವಾನಿಸಿದಳು.</verse>
				<verse number="16">ಒಂದು ದಿನ ನಾವು ಪ್ರಾರ್ಥನಾ ಸ್ಥಳಕ್ಕೆ ಹೋಗುತ್ತಿದ್ದೆವು. ಗಾರುಡಗಾತಿಯಾದ ಒಬ್ಬ ದಾಸಿ ನಮ್ಮನ್ನು ಎದುರುಗೊಂಡಳು. ಆ ಹುಡುಗಿ ಕಣಿಶಕುನ ಹೇಳಿ ತನ್ನ ಯಜಮಾನನಿಗೆ ತುಂಬಾ ಹಣ ಸಂಪಾದಿಸುತ್ತಿದ್ದಳು.</verse>
				<verse number="17">ಅವಳು ಪೌಲನನ್ನು ಮತ್ತು ನಮ್ಮನ್ನು ಹಿಂಬಾಲಿಸುತ್ತಾ, “ಇವರು ಮಹೋನ್ನತ ದೇವರ ಕಿಂಕರರು; ಜೀವೋದ್ಧಾರದ ಮಾರ್ಗವನ್ನು ಇವರು ನಿಮಗೆ ಸಾರುತ್ತಾರೆ,” ಎಂದು ಚೀರುತ್ತಿದ್ದಳು.</verse>
				<verse number="18">ಹೀಗೆ ದಿನೇ ದಿನೇ ಮಾಡುತ್ತಿದ್ದಳು. ಇದರಿಂದ ಪೌಲನಿಗೆ ಬಹಳ ಬೇಸರವಾಯಿತು. ಅವಳ ಕಡೆಗೆ ತಿರುಗಿ, ಅವಳನ್ನು ಹಿಡಿದಿದ್ದ ದೆವ್ವಕ್ಕೆ, “ಇವಳನ್ನು ಬಿಟ್ಟು ತೊಲಗು ಎಂದು ಯೇಸುಕ್ರಿಸ್ತರ ನಾಮದಲ್ಲಿ ನಿನಗೆ ಆಜ್ಞಾಪಿಸುತ್ತೇನೆ,” ಎಂದನು. ಆ ಕ್ಷಣವೇ ಅದು ಅವಳನ್ನು ಬಿಟ್ಟುಹೋಯಿತು.</verse>
				<verse number="19">ಹಣ ಗಳಿಸುತ್ತಿದ್ದ ಅವಳ ಯಜಮಾನನಿಗೆ ನಿರಾಶೆಯಾಯಿತು. ಅವರು ಪೌಲ ಮತ್ತು ಸೀಲರನ್ನು ಬಂಧಿಸಿ ಸಾರ್ವಜನಿಕ ನ್ಯಾಯಸ್ಥಾನದಲ್ಲಿದ್ದ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.</verse>
				<verse number="20">ಅಲ್ಲಿದ್ದ ರೋಮಿನ ನ್ಯಾಯಾಧಿಪತಿಗಳ ಮುಂದೆ ನಿಲ್ಲಿಸಿ, “ಇವರು ನಮ್ಮ ಪಟ್ಟಣದಲ್ಲಿ ಗಲಭೆ ಎಬ್ಬಿಸುತ್ತಿದ್ದಾರೆ.</verse>
				<verse number="21">ಇವರು ಯೆಹೂದ್ಯರು. ರೋಮನರಾದ ನಾವು ಅಂಗೀಕರಿಸಲು ಅಥವಾ ಅನುಸರಿಸಲು ಆಗದಂತಹ ಆಚಾರಗಳನ್ನು ಪ್ರಚಾರ ಮಾಡುತ್ತಿದ್ದಾರೆ,” ಎಂದರು.</verse>
				<verse number="22">ಜನರ ಗುಂಪು ಅವರೊಡನೆ ಸೇರಿ ದೊಂಬಿಮಾಡಿತು. ನ್ಯಾಯಾಧಿಪತಿಗಳು ಪೌಲ ಮತ್ತು ಸೀಲರ ವಸ್ತ್ರಗಳನ್ನು ಕಿತ್ತುಹಾಕಿಸಿ ಛಡಿ ಏಟುಗಳನ್ನು ಕೊಡುವಂತೆ ಆಜ್ಞೆಮಾಡಿದರು.</verse>
				<verse number="23">ಅವರನ್ನು ಚೆನ್ನಾಗಿ ಥಳಿಸಿದ ಮೇಲೆ ಸೆರೆಮನೆಯಲ್ಲಿ ಹಾಕಿ ಎಚ್ಚರಿಕೆಯಿಂದ ನೋಡಿಕೊಳ್ಳಬೇಕೆಂದು ಸೆರೆಮನೆಯ ಅಧಿಕಾರಿಗೆ ಅಪ್ಪಣೆ ವಿಧಿಸಲಾಯಿತು.</verse>
				<verse number="24">ಅಂತೆಯೇ, ಆ ಅಧಿಕಾರಿ ಅವರನ್ನು ಸೆರೆಮನೆಯ ಒಳಕೋಣೆಗೆ ತಳ್ಳಿ ಅವರ ಕಾಲುಗಳನ್ನು ಮರದ ದಿಮ್ಮಿಗಳಿಗೆ ಬಿಗಿಸಿದನು.</verse>
				<verse number="25">ಸುಮಾರು ನಡುರಾತ್ರಿಯ ಸಮಯ. ಪೌಲ ಮತ್ತು ಸೀಲ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.</verse>
				<verse number="26">ಇದ್ದಕ್ಕಿದ್ದಂತೆ ಭೀಕರ ಭೂಕಂಪ ಉಂಟಾಯಿತು. ಸೆರೆಮನೆಯ ಅಸ್ತಿವಾರವೇ ಕದಲಿತು. ಆ ಕ್ಷಣವೇ ಕದಗಳೆಲ್ಲಾ ತೆರೆದುವು. ಕೈದಿಗಳೆಲ್ಲರ ಬಂಧನಗಳು ಕಳಚಿಬಿದ್ದವು.</verse>
				<verse number="27">ಎಚ್ಚೆತ್ತ ಅಧಿಕಾರಿ ಸೆರೆಮನೆಯ ಬಾಗಿಲುಗಳೆಲ್ಲಾ ತೆರೆದಿರುವುದನ್ನು ಕಂಡನು. ಕೈದಿಗಳೆಲ್ಲರು ತಪ್ಪಿಸಿಕೊಂಡಿರುವರೆಂದು ಭಾವಿಸಿ ತನ್ನ ಖಡ್ಗವನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳುವುದರಲ್ಲಿದ್ದನು.</verse>
				<verse number="28">ಆಗ ಪೌಲನು ಗಟ್ಟಿಯಾಗಿ ಕೂಗುತ್ತಾ, “ನೀನೇನೂ ಹಾನಿಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ,” ಎಂದನು.</verse>
				<verse number="29">ಸೆರೆಮನೆಯ ಅಧಿಕಾರಿ ದೀಪವನ್ನು ತರಿಸಿ, ಒಳಗೆ ಧಾವಿಸಿ ಬಂದು, ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಪಾದಕ್ಕೆ ಬಿದ್ದನು.</verse>
				<verse number="30">ಅನಂತರ ಅವರನ್ನು ಹೊರಗೆ ಕರೆತಂದು, “ಸ್ವಾಮಿಗಳೇ, ಜೀವೋದ್ಧಾರ ಪಡೆಯಲು ನಾನು ಮಾಡಬೇಕಾದುದು ಏನು?” ಎಂದು ವಿಚಾರಿಸಿದನು.</verse>
				<verse number="31">“ಪ್ರಭು ಯೇಸುವಿನಲ್ಲಿ ವಿಶ್ವಾಸವಿಡು, ನೀನೂ ನಿನ್ನ ಮನೆಯವರೆಲ್ಲರೂ ಜೀವೋದ್ಧಾರವನ್ನು ಹೊಂದುವಿರಿ,” ಎಂದು ಅವರು ಉತ್ತರಕೊಟ್ಟರು.</verse>
				<verse number="32">ಅನಂತರ ಪ್ರಭುವಿನ ಸಂದೇಶವನ್ನು ಅವನಿಗೂ ಅವನ ಮನೆಯಲ್ಲಿದ್ದ ಎಲ್ಲರಿಗೂ ಬೋಧಿಸಿದರು.</verse>
				<verse number="33">ರಾತ್ರಿಯ ವೇಳೆಯಲ್ಲೇ ಸೆರೆಮನೆಯ ಅಧಿಕಾರಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು. ಅನಂತರ ಅವನೂ ಅವನ ಕುಟುಂಬದವರೂ ದೀಕ್ಷಾಸ್ನಾನವನ್ನು ಪಡೆದರು.</verse>
				<verse number="34">ಬಳಿಕ ಪೌಲ ಮತ್ತು ಸೀಲರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಬಡಿಸಿದನು. ದೇವರಲ್ಲಿ ವಿಶ್ವಾಸವಿಡುವ ಸದವಕಾಶ ದೊರಕಿದ್ದಕ್ಕಾಗಿ ಅವನೂ ಅವನ ಮನೆಯವರೆಲ್ಲರೂ ಉಲ್ಲಾಸಗೊಂಡರು.</verse>
				<verse number="35">ಮಾರನೆಯ ಬೆಳಿಗ್ಗೆ ನ್ಯಾಯಾಧಿಪತಿಗಳು ಜವಾನರ ಮುಖಾಂತರ, “ಈ ವ್ಯಕ್ತಿಗಳನ್ನು ಬಿಟ್ಟುಬಿಡು,” ಎಂದು ಹೇಳಿಕಳುಹಿಸಿದರು.</verse>
				<verse number="36">ಸೆರೆಮನೆಯ ಅಧಿಕಾರಿ ಪೌಲನ ಬಳಿಗೆ ಬಂದು, “ನ್ಯಾಯಾಧಿಪತಿಗಳು ನಿಮ್ಮನ್ನು ಬಿಡುಗಡೆಮಾಡುವಂತೆ ಹೇಳಿಕಳುಹಿಸಿದ್ದಾರೆ; ನೀವು ನೆಮ್ಮದಿಯಿಂದ ಹೊರಟುಹೋಗಬಹುದು,” ಎಂದು ವರದಿಮಾಡಿದನು.</verse>
				<verse number="37">ಆದರೆ ಪೌಲನು ಅವರಿಗೆ, “ನಮ್ಮನ್ನು ಶಿಕ್ಷೆಗೊಳಪಡಿಸುವಂಥ ಅಪರಾಧವನ್ನೇನೂ ನಾವು ಮಾಡಿಲ್ಲ. ಅಲ್ಲದೆ ನಾವು ರೋಮಿನ ಪೌರರು, ಆದರೂ ನಮ್ಮನ್ನು ಬಹಿರಂಗವಾಗಿ ಛಡಿಗಳಿಂದ ಹೊಡಿಸಿದ್ದಾರೆ. ಸೆರೆಮನೆಗೆ ತಳ್ಳಿದ್ದಾರೆ; ಈಗ ಗೋಪ್ಯವಾಗಿ ನಮ್ಮನ್ನು ಕಳುಹಿಸಿಬಿಡಬೇಕೆಂದಿದ್ದಾರೆಯೆ? ಇಲ್ಲ, ಇದು ಸಾಧ್ಯವಿಲ್ಲ. ನ್ಯಾಯಾಧಿಪತಿಗಳೇ ಖುದ್ದಾಗಿ ಇಲ್ಲಿಗೆ ಬಂದು ನಮ್ಮನ್ನು ಬಿಡುಗಡೆ ಮಾಡಲಿ,” ಎಂದನು.</verse>
				<verse number="38">ಜವಾನರು ಈ ಮಾತುಗಳನ್ನು ನ್ಯಾಯಾಧಿಪತಿಗಳಿಗೆ ವರದಿಮಾಡಿದರು. ಅವರು ಪೌಲ ಮತ್ತು ಸೀಲ ರೋಮಿನ ಪೌರರೆಂದು ಕೇಳಿ ಭಯಪಟ್ಟರು.</verse>
				<verse number="39">ಆದುದರಿಂದ ಅವರೇ ಬಂದು ಕ್ಷಮೆಕೋರಿ, ಸೆರೆಮನೆಯಿಂದ ಬಿಡುಗಡೆಮಾಡಿ, ನಗರವನ್ನು ಬಿಟ್ಟು ಹೋಗಬೇಕೆಂದು ವಿನಂತಿಸಿದರು.</verse>
				<verse number="40">ಪೌಲ ಮತ್ತು ಸೀಲ ಸೆರೆಮನೆಯಿಂದ ಹೊರಟು ಲಿಡಿಯಳ ಮನೆಗೆ ಹೋದರು. ಭಕ್ತವಿಶ್ವಾಸಿಗಳನ್ನು ಸಂಧಿಸಿ ಅವರಿಗೆ ಪ್ರೋತ್ಸಾಹದ ಮಾತುಗಳನ್ನಾಡಿ ಅಲ್ಲಿಂದ ನಿರ್ಗಮಿಸಿದರು.</verse>
			</chapter>
			<chapter number="17">
				<verse number="1">ಪೌಲ ಮತ್ತು ಸೀಲ ಆಂಫಿಪೊಲಿ ಹಾಗೂ ಅಪೊಲೋನಿಯ ಮಾರ್ಗವಾಗಿ ಪ್ರಯಾಣಮಾಡಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಪ್ರಾರ್ಥನಾಮಂದಿರ ಒಂದಿತ್ತು.</verse>
				<verse number="2">ಪೌಲನು ವಾಡಿಕೆಯ ಪ್ರಕಾರ ಪ್ರಾರ್ಥನಾಮಂದಿರಕ್ಕೆ ಹೋದನು. ಮೂರು ಸಬ್ಬತ್‍ದಿನ ಪವಿತ್ರಗ್ರಂಥವನ್ನು ಉಲ್ಲೇಖಿಸಿ, ಅಲ್ಲಿದ್ದವರೊಡನೆ ಚರ್ಚೆಮಾಡಿದನು.</verse>
				<verse number="3">ಪವಿತ್ರಗ್ರಂಥದ ಪ್ರಕಾರ ಲೋಕೋದ್ಧಾರಕನು ಯಾತನೆಯನ್ನು ಅನುಭವಿಸಬೇಕಾಗಿತ್ತೆಂದೂ ಮರಣಹೊಂದಿ ಪುನರುತ್ಥಾನ ಹೊಂದಬೇಕಾಗಿತ್ತೆಂದೂ ಪ್ರತಿಪಾದಿಸಿದನು. ‘ನಾನು ನಿಮಗೆ ಸಾರುತ್ತಿರುವ ಯೇಸುಸ್ವಾಮಿಯೇ ಆ ಉದ್ಧಾರಕ’ ಎಂದು ಸ್ಪಷ್ಟಪಡಿಸಿದನು.</verse>
				<verse number="4">ಇದು ಸತ್ಯವೆಂದು ಮನವರಿಕೆ ಆದ ಕೆಲವರು ಪೌಲ ಮತ್ತು ಸೀಲರನ್ನು ಸೇರಿಕೊಂಡರು. ಅಂತೆಯೇ ದೈವಭಕ್ತರಾಗಿದ್ದ ಗ್ರೀಕರ ದೊಡ್ಡ ಗುಂಪೂ ಅನೇಕ ಕುಲೀನ ಸ್ತ್ರೀಯರೂ ಅವರನ್ನು ಸೇರಿಕೊಂಡರು.</verse>
				<verse number="5">ಆದರೆ ಯೆಹೂದ್ಯರು ಮತ್ಸರದಿಂದ ಕೂಡಿ, ಪುಂಡಪೋಕರಿಗಳನ್ನು ಎತ್ತಿಕಟ್ಟಿ, ಒಂದು ಗುಂಪನ್ನು ಕೂಡಿಸಿದರು. ಪಟ್ಟಣದಲ್ಲೆಲ್ಲಾ ದೊಂಬಿ ಎಬ್ಬಿಸಿದರು. ಪೌಲ ಮತ್ತು ಸೀಲರನ್ನು ಜನರ ಮುಂದೆ ಎಳೆದುತರುವ ಉದ್ದೇಶದಿಂದ ಅವರನ್ನು ಹುಡುಕುತ್ತಾ ಯಾಸೋನ ಎಂಬವನ ಮನೆಯನ್ನು ಮುತ್ತಿದರು.</verse>
				<verse number="6">ಅವರನ್ನು ಅಲ್ಲಿ ಕಾಣದಿರಲು ಯಾಸೋನನನ್ನೂ ಕೆಲವು ಭಕ್ತವಿಶ್ವಾಸಿಗಳನ್ನೂ ನಗರಾಧಿಕಾರಿಗಳ ಮುಂದೆ ಎಳೆದುತಂದು, “ಎಲ್ಲೆಲ್ಲೂ ಅಲ್ಲೋಲ ಕಲ್ಲೋಲ ಎಬ್ಬಿಸಿದ ಆ ವ್ಯಕ್ತಿಗಳು ಈಗ ನಮ್ಮ ನಗರಕ್ಕೂ ಬಂದಿದ್ದಾರೆ.</verse>
				<verse number="7">ಈ ಯಾಸೋನನು ಅವರಿಗೆ ಆಶ್ರಯಕೊಟ್ಟಿದ್ದಾನೆ. ಅವರು ‘ಯೇಸು’ ಎಂಬ ಇನ್ನೊಬ್ಬ ಅರಸನಿದ್ದಾನೆಂದು ಹೇಳುತ್ತಾ ಚಕ್ರವರ್ತಿಯ ಆಜ್ಞೆಗಳನ್ನು ಉಲ್ಲಂಘಿಸುತ್ತಿದ್ದಾರೆ,” ಎಂದು ಗುಲ್ಲೆಬ್ಬಿಸಿದರು.</verse>
				<verse number="8">ನಗರದ ನಿವಾಸಿಗಳೂ ಅಧಿಕಾರಿಗಳೂ ಇದನ್ನು ಕೇಳಿ ಉದ್ರಿಕ್ತರಾದರು;</verse>
				<verse number="9">ಯಾಸೋನ ಮತ್ತಿತರ ಸಂಗಡಿಗರಿಂದ ಜಾಮೀನು ಪಡೆದು ಅವರನ್ನು ಬಿಡುಗಡೆಮಾಡಿದರು.</verse>
				<verse number="10">ಭಕ್ತವಿಶ್ವಾಸಿಗಳು ಪೌಲ ಮತ್ತು ಸೀಲರನ್ನು ರಾತ್ರೋರಾತ್ರಿಯಲ್ಲೇ ಬೆರೋಯ ಎಂಬ ಊರಿಗೆ ಕಳುಹಿಸಿಬಿಟ್ಟರು. ಇವರು ಆ ಊರನ್ನು ತಲುಪಿದ್ದೇ, ಯೆಹೂದ್ಯರ ಪ್ರಾರ್ಥನಾಮಂದಿರಕ್ಕೆ ಹೋದರು.</verse>
				<verse number="11">ಅಲ್ಲಿನ ಯೆಹೂದ್ಯರು ಥೆಸಲೋನಿಕದ ಜನರಿಗಿಂತ ವಿಶಾಲ ಮನೋಭಾವವುಳ್ಳವರು; ಶುಭಸಂದೇಶವನ್ನು ಅತ್ಯಾಸಕ್ತಿಯಿಂದ ಸ್ವಾಗತಿಸಿದರು. ಅದು ಪವಿತ್ರಗ್ರಂಥಕ್ಕೆ ಅನುಗುಣವಾಗಿದೆಯೇ ಎಂದು ತಿಳಿದುಕೊಳ್ಳಲು ಪ್ರತಿದಿನವೂ ಅಧ್ಯಯನ ಮಾಡತೊಡಗಿದರು.</verse>
				<verse number="12">ಅವರಲ್ಲಿ ಅನೇಕರು ವಿಶ್ವಾಸಿಗಳಾದರು. ಅನೇಕ ಗ್ರೀಕ್ ಕುಲೀನ ಸ್ತ್ರೀಯರೂ ಪುರುಷರೂ ವಿಶ್ವಾಸಿಗಳಾದರು.</verse>
				<verse number="13">ಪೌಲನು ಬೆರೋಯದಲ್ಲೂ ದೇವರ ವಾಕ್ಯವನ್ನು ಸಾರುತ್ತಿದ್ದಾನೆಂಬ ವರ್ತಮಾನವು ಥೆಸಲೋನಿಕದ ಯೆಹೂದ್ಯರಿಗೆ ತಿಳಿದುಬಂತು. ಅವರು ಅಲ್ಲಿಗೂ ಬಂದು ಜನಸಮೂಹವನ್ನು ಪ್ರಚೋದಿಸಿ ಗಲಭೆಯೆಬ್ಬಿಸಿದರು.</verse>
				<verse number="14">ಕೂಡಲೇ ಭಕ್ತವಿಶ್ವಾಸಿಗಳು ಪೌಲನನ್ನು ಸಮುದ್ರ ತೀರಕ್ಕೆ ಕಳುಹಿಸಿಬಿಟ್ಟರು. ಆದರೆ ಸೀಲ ಮತ್ತು ತಿಮೊಥೇಯ ಬೆರೋಯದಲ್ಲೇ ಉಳಿದುಕೊಂಡರು.</verse>
				<verse number="15">ಪೌಲನನ್ನು ಬಿಟ್ಟುಬರಲು ಹೋದವರು ಅವನ ಜೊತೆ ಅಥೆನ್ಸಿನವರೆಗೆ ಹೋದರು; ಅನಂತರ ಸೀಲ ಮತ್ತು ತಿಮೊಥೇಯರಿಬ್ಬರೂ ಸಾಧ್ಯವಾದಷ್ಟು ಬೇಗ ತನ್ನ ಬಳಿಗೆ ಬಂದುಸೇರಬೇಕೆಂಬ ಆಜ್ಞೆಯನ್ನು ಪೌಲನಿಂದ ಪಡೆದು, ಅವರು ಬೆರೋಯಕ್ಕೆ ಹಿಂದಿರುಗಿದರು.</verse>
				<verse number="16">ಅಥೆನ್ಸಿನಲ್ಲಿ ಪೌಲನು, ಸೀಲ ಮತ್ತು ತಿಮೊಥೇಯರನ್ನು ಎದುರುನೋಡುತ್ತಿದ್ದನು. ಆ ಪಟ್ಟಣದಲ್ಲಿ ಎಲ್ಲಿ ನೋಡಿದರಲ್ಲಿ ವಿಗ್ರಹಗಳಿರುವುದನ್ನು ಕಂಡು, ಅವನ ಮನಸ್ಸು ಕುದಿಯಿತು.</verse>
				<verse number="17">ಆದುದರಿಂದ ಅವನು ಪ್ರಾರ್ಥನಾಮಂದಿರಕ್ಕೆ ಹೋಗಿ ಯೆಹೂದ್ಯರೊಡನೆ ಮತ್ತು ಯೆಹೂದ್ಯಮತಾವಲಂಬಿಗಳೊಡನೆ ಚರ್ಚಿಸತೊಡಗಿದನು. ಸಾರ್ವಜನಿಕ ಚೌಕದ ಬಳಿ, ಕಂಡಕಂಡವರೊಡನೆ ಪ್ರತಿದಿನವೂ ತರ್ಕಮಾಡಿದನು.</verse>
				<verse number="18">ಕೆಲವು ಎಪಿಕೂರಿಯ ಮತ್ತು ಸ್ತೋಯಿಕ ತತ್ವಶಾಸ್ತ್ರಜ್ಞರೂ ಕೂಡ ಅವನೊಡನೆ ವಾದಿಸಿದರು. ಕೆಲವರು “ಈ ಬಾಯಿಬಡುಕ ಹೇಳುವುದಾದರೂ ಏನು?” ಎಂದರು. ಪೌಲನು ಯೇಸುಸ್ವಾಮಿಯ ವಿಷಯವಾಗಿಯೂ ಪುನರುತ್ಥಾನದ ವಿಷಯವಾಗಿಯೂ ಬೋಧಿಸುತ್ತಿದ್ದುದರಿಂದ ಮತ್ತೆ ಕೆಲವರು ‘ಇವನು ವಿದೇಶೀಯ ದೇವರುಗಳ ಬಗ್ಗೆ ಮಾತನಾಡುವಂತೆ ಕಾಣುತ್ತದೆ,’ ಎಂದರು.</verse>
				<verse number="19">ಅವರು ಪೌಲನನ್ನು ಅರಿಯೊಪಾಗ ಎಂಬ ಸ್ಥಳಕ್ಕೆ ಕರೆತಂದು, “ನೀನು ಸಾರುತ್ತಿರುವ ನೂತನ ತತ್ವವನ್ನು ನಾವು ತಿಳಿದುಕೊಳ್ಳಬಹುದೇ?</verse>
				<verse number="20">ನೀನು ಹೇಳುತ್ತಿರುವ ಕೆಲವು ಸಂಗತಿಗಳು ನಮಗೆ ವಿಚಿತ್ರವಾಗಿ ತೋರುತ್ತವೆ. ಆದ್ದರಿಂದ ಅವುಗಳ ಅರ್ಥವೇನೆಂದು ತಿಳಿಯಬಯಸುತ್ತೇವೆ,” ಎಂದರು. (</verse>
				<verse number="21">ಅಥೆನ್ಸಿನ ನಿವಾಸಿಗಳು ಮತ್ತು ಅಲ್ಲಿ ವಾಸಿಸುತ್ತಿದ್ದ ವಿದೇಶೀಯರು ಅತ್ಯಾಧುನಿಕ ವಿದ್ಯಮಾನಗಳನ್ನು ಕುರಿತು ಮಾತನಾಡುವುದರಲ್ಲೂ ಕೇಳಿತಿಳಿಯುವುದರಲ್ಲೂ ಸಮಯ ಕಳೆಯುತ್ತಿದ್ದರು).</verse>
				<verse number="22">ಪೌಲನು ಅರಿಯೊಪಾಗಿನ ಸಭೆಯ ಮುಂದೆ ನಿಂತು ಹೀಗೆಂದನು: “ಅಥೆನ್ಸಿನ ಮಹಾಜನರೇ, ನೀವು ಎಲ್ಲಾ ವಿಧದಲ್ಲೂ ಬಹು ಧರ್ಮನಿಷ್ಠರೆಂದು ನನಗೆ ತೋರುತ್ತದೆ.</verse>
				<verse number="23">ನಿಮ್ಮ ಪಟ್ಟಣದಲ್ಲಿ ನಾನು ತಿರುಗಾಡುತ್ತಾ, ನೀವು ಪೂಜಿಸುವ ವಿಗ್ರಹಗಳನ್ನು ಗಮನಿಸುತ್ತಾ ಇದ್ದಾಗ ಒಂದು ಬಲಿಪೀಠವು ಕಣ್ಣಿಗೆ ಬಿದ್ದಿತು. ಅದರ ಮೇಲೆ ‘ಅಜ್ಞಾತ ದೇವರಿಗೆ’ ಎಂಬ ಲಿಖಿತವಿತ್ತು. ನೀವು ಅರಿಯದೆ ಆರಾಧಿಸುವ ಆ ದೇವರನ್ನೇ ಅರುಹಿಸಲು ನಾನು ಬಂದಿರುತ್ತೇನೆ.</verse>
				<verse number="24">ಜಗತ್ತನ್ನು ಹಾಗೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ದೇವರು ಇಹಪರಗಳಿಗೆ ಒಡೆಯರು; ಮಾನವನು ನಿರ್ಮಿಸಿದ ಗುಡಿಗಳಲ್ಲಿ ಅವರು ಮನೆಮಾಡುವಂಥವರಲ್ಲ.</verse>
				<verse number="25">ಎಲ್ಲಾ ಜೀವಿಗಳಿಗೆ ಪ್ರಾಣವನ್ನೂ ಶ್ವಾಸವನ್ನೂ ಸಮಸ್ತವನ್ನೂ ಕೊಡುವವರು ಅವರೇ; ಎಂದೇ ಅವರಿಗಾಗಿ ಮಾನವನು ದುಡಿಯಬೇಕಾದ ಅವಶ್ಯಕತೆ ಇಲ್ಲ. ಅಂಥ ಕೊರತೆ ಅವರಿಗೇನೂ ಇಲ್ಲ.</verse>
				<verse number="26">ಒಂದೇ ಮೂಲದಿಂದ ಅವರು ಎಲ್ಲಾ ಜನಾಂಗಗಳನ್ನು ಸೃಷ್ಟಿಸಿ ಭೂಮಂಡಲದಲ್ಲೆಲ್ಲಾ ಜೀವಿಸುವಂತೆ ಮಾಡಿದ್ದಾರೆ. ಆಯಾ ಜನಾಂಗದ ಕಾಲಾವಧಿಯನ್ನೂ ಅವರವರ ನೆಲೆಯ ಎಲ್ಲೆಮೇರೆಗಳನ್ನೂ ಮುಂಚಿತವಾಗಿ ಅವರೇ ನಿರ್ಧರಿಸಿದ್ದಾರೆ.</verse>
				<verse number="27">ಜನರು ತಮ್ಮನ್ನು ಅರಸಬೇಕೆಂಬುದೇ ಅವರ ಉದ್ದೇಶ; ಹೀಗಾದರೂ ತಮ್ಮನ್ನು ಅರಸಿ ಸಾಕ್ಷಾತ್ಕರಿಸಿಕೊಂಡಾರು ಎಂದು ದೇವರು ಹೀಗೆ ಮಾಡಿದರು. ಆದರೂ, ನಮ್ಮಲ್ಲಿ ಯಾರೊಬ್ಬರಿಂದಲೂ ದೇವರು ದೂರವಿಲ್ಲ.</verse>
				<verse number="28">ಏಕೆಂದರೆ, ‘ನಾವು ಜೀವಿಸುವುದೂ ಚಲಿಸುವುದೂ ಇರುವುದೂ ಅವರಲ್ಲೇ’; ನಿಮ್ಮ ಕವಿಗಳಲ್ಲೇ ಕೆಲವರು ಹೇಳಿರುವಂತೆ, ‘ನಾವು ನಿಜವಾಗಿ ದೇವರ ಮಕ್ಕಳು.’</verse>
				<verse number="29">“ನಾವು ದೇವರ ಮಕ್ಕಳಾಗಿರುವುದರಿಂದ ಜನರು ಕಲಾಕುಶಲತೆಯಿಂದಲೂ ಕಲ್ಪನೆಯಿಂದಲೂ ರೂಪಿಸಿದ ಚಿನ್ನ, ಬೆಳ್ಳಿ, ಶಿಲೆಗಳ ಪ್ರತಿಮೆಗೆ ದೇವರು ಸಮಾನರೆಂದು ಭಾವಿಸಲಾಗದು.</verse>
				<verse number="30">ಮಾನವರು ತಮ್ಮನ್ನು ಅರಿಯದೆ ಬಾಳಿದ ಕಾಲವನ್ನು ದೇವರು ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲೆಡೆಯಲ್ಲಿರುವ ಸರ್ವಮಾನವರು ದುರ್ಮಾರ್ಗಗಳನ್ನು ಬಿಟ್ಟು ತಮಗೆ ಅಭಿಮುಖರಾಗಬೇಕೆಂದು ಆಜ್ಞಾಪಿಸುತ್ತಾರೆ.</verse>
				<verse number="31">ಏಕೆಂದರೆ, ಅವರು ಒಂದು ದಿನವನ್ನು ಗೊತ್ತುಮಾಡಿದ್ದಾರೆ; ಆ ದಿನದಂದು ತಾವು ನೇಮಿಸಿದ ಒಬ್ಬ ವ್ಯಕ್ತಿಯ ಮುಖಾಂತರ ಇಡೀ ಜಗತ್ತಿಗೆ ನ್ಯಾಯನಿರ್ಣಯ ಮಾಡುವರು. ಇದನ್ನು ಎಲ್ಲರಿಗೂ ಖಚಿತಪಡಿಸಲೆಂದೇ ಆ ವ್ಯಕ್ತಿಯನ್ನು ಮರಣದಿಂದ ಪುನರುತ್ಥಾನಗೊಳಿಸಿದ್ದಾರೆ.”</verse>
				<verse number="32">ಸತ್ತವರ ಪುನರುತ್ಥಾನದ ಬಗ್ಗೆ ಪೌಲನು ಮಾತಾಡಿದಾಗ ಕೆಲವರು ಪರಿಹಾಸ್ಯಮಾಡಿದರು. ಉಳಿದವರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ,” ಎಂದರು.</verse>
				<verse number="33">ಹೀಗೆ ಪೌಲನು ಆ ಸಭೆಯಿಂದ ನಿರ್ಗಮಿಸಿದನು.</verse>
				<verse number="34">ಕೆಲವರು ಅವನನ್ನು ಸೇರಿಕೊಂಡು ಭಕ್ತವಿಶ್ವಾಸಿಗಳಾದರು. ಇವರಲ್ಲಿ ಅರಿಯೊಪಾಗದ ದಿಯೊನಿಸಿಯನೂ ದಮಾರಿ ಎಂಬ ಸ್ತ್ರೀಯೂ ಮತ್ತಿತರರೂ ಇದ್ದರು.</verse>
			</chapter>
			<chapter number="18">
				<verse number="1">ಇದಾದ ಮೇಲೆ ಪೌಲನು ಅಥೆನ್ಸ್ ಅನ್ನು ಬಿಟ್ಟು ಕೊರಿಂಥಕ್ಕೆ ಹೋದನು.</verse>
				<verse number="2">ಪೊಂತ ಎಂಬ ಊರಿನ ಅಕ್ವಿಲ ಎಂಬ ಯೆಹೂದ್ಯನನ್ನು ಅಲ್ಲಿ ಕಂಡನು. ಚಕ್ರವರ್ತಿ ಕ್ಲಾಡಿಯಸನು ಯೆಹೂದ್ಯರೆಲ್ಲರೂ ರೋಮ್‍ನಗರವನ್ನು ಬಿಟ್ಟುಹೋಗಬೇಕೆಂದು ಆಜ್ಞಾಪಿಸಿದ್ದರಿಂದ, ಈ ಅಕ್ವಿಲನು ತನ್ನ ಪತ್ನಿ ಪ್ರಿಸ್ಸಿಲಳೊಂದಿಗೆ ಇಟಲಿಯಿಂದ ಇತ್ತೀಚೆಗೆ ಬಂದಿದ್ದನು. ಪೌಲನು ಅವರನ್ನು ನೋಡಲು ಹೋದನು.</verse>
				<verse number="3">ಅವರು ತನ್ನಂತೆಯೇ ಗುಡಾರಮಾಡುವ ಕಸುಬಿನವರಾಗಿದ್ದರಿಂದ ಅವರಲ್ಲೇ ತಂಗಿದ್ದು ಅವರೊಡನೆ ಕೆಲಸಮಾಡುತ್ತಾ ಬಂದನು.</verse>
				<verse number="4">ಪ್ರತಿ ಸಬ್ಬತ್‍ದಿನ ಅವನು ಪ್ರಾರ್ಥನಾಮಂದಿರದಲ್ಲಿ ಚರ್ಚಿಸುತ್ತಾ ಯೆಹೂದ್ಯರನ್ನು ಮತ್ತು ಗ್ರೀಕರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸುತ್ತಿದ್ದನು.</verse>
				<verse number="5">ಸೀಲ ಮತ್ತು ತಿಮೊಥೇಯ ಮಕೆದೋನಿಯದಿಂದ ಬಂದ ಮೇಲೆ ಪೌಲನು ಶುಭಸಂದೇಶವನ್ನು ಸಾರುವುದರಲ್ಲೂ ಯೇಸುವೇ ಬರಬೇಕಾದ ಲೋಕೋದ್ಧಾರಕ ಎಂದು ಯೆಹೂದ್ಯರಿಗೆ ರುಜುವಾತುಪಡಿಸುವುದರಲ್ಲೂ ತನ್ನ ಸಮಯವನ್ನು ಕಳೆದನು.</verse>
				<verse number="6">ಆದರೆ ಆ ಯೆಹೂದ್ಯರು ಅವನನ್ನು ಪ್ರತಿಭಟಿಸಿ ದೂಷಿಸಿದರು. ಆಗ ಪೌಲನು ತನ್ನ ಹೊದಿಕೆಯನ್ನು ಒದರಿ, “ನಿಮ್ಮ ವಿನಾಶಕ್ಕೆ ನೀವೇ ಹೊಣೆ; ಅದಕ್ಕೆ ನಾನು ಬಾಧ್ಯನಲ್ಲ. ಇಂದಿನಿಂದ ನಾನು ಅನ್ಯಧರ್ಮೀಯರ ಕಡೆಗೆ ಹೋಗುತ್ತೇನೆ,” ಎಂದನು.</verse>
				<verse number="7">ಅಂತೆಯೇ ಅವರನ್ನು ಬಿಟ್ಟು ದೇವರಲ್ಲಿ ಭಯಭಕ್ತಿಯುಳ್ಳವನಾಗಿದ್ದ ತೀತಯುಸ್ತ ಎಂಬವನ ಮನೆಗೆ ಹೋದನು. ಅವನ ಮನೆ ಪ್ರಾರ್ಥನಾಮಂದಿರದ ಪಕ್ಕದಲ್ಲೇ ಇತ್ತು.</verse>
				<verse number="8">ಪ್ರಾರ್ಥನಾಮಂದಿರದ ಅಧ್ಯಕ್ಷ ಕ್ರಿಸ್ಪ ಎಂಬವನೂ ಅವನ ಮನೆಯವರೆಲ್ಲರೂ ಪ್ರಭುವಿನಲ್ಲಿ ವಿಶ್ವಾಸವಿಟ್ಟರು. ಕೊರಿಂಥದ ಇನ್ನೂ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟರು ಮತ್ತು ದೀಕ್ಷಾಸ್ನಾನ ಪಡೆದರು.</verse>
				<verse number="9">ಒಂದು ರಾತ್ರಿ ಪೌಲನಿಗೆ ಪ್ರಭು ದರ್ಶನ ಇತ್ತು, “ಭಯಪಡಬೇಡ, ಬೋಧನೆ ಮಾಡುವುದನ್ನು ಮುಂದುವರಿಸು,</verse>
				<verse number="10">ನಾನು ನಿನ್ನೊಡನೆ ಇದ್ದೇನೆ. ಯಾರೂ ನಿನ್ನ ಮೇಲೆ ಬಿದ್ದು ಹಾನಿಮಾಡುವುದಿಲ್ಲ. ಪಟ್ಟಣದ ಅನೇಕ ಜನರು ನನ್ನ ಪರವಾಗಿದ್ದಾರೆ,” ಎಂದರು.</verse>
				<verse number="11">ಅಂತೆಯೇ ಪೌಲನು ಒಂದೂವರೆ ವರ್ಷಕಾಲ ಅಲ್ಲಿದ್ದು ದೇವರವಾಕ್ಯವನ್ನು ಜನರಿಗೆ ಬೋಧಿಸಿದನು.</verse>
				<verse number="12">ಗಲ್ಲಿಯೋ ಎಂಬವನು ಅಖಾಯದಲ್ಲಿ ರಾಜ್ಯಪಾಲನಾಗಿದ್ದಾಗ, ಯೆಹೂದ್ಯರು ಪೌಲನ ವಿರುದ್ಧ ಒಟ್ಟುಗೂಡಿ ಅವನನ್ನು ಬಂಧಿಸಿ ನ್ಯಾಯಸ್ಥಾನಕ್ಕೆ ಕೊಂಡೊಯ್ದರು.</verse>
				<verse number="13">“ಧರ್ಮಶಾಸ್ತ್ರಕ್ಕೆ ವ್ಯತಿರಿಕ್ತವಾದ ರೀತಿಯಲ್ಲಿ ದೇವರನ್ನು ಆರಾಧಿಸುವಂತೆ ಈ ಮನುಷ್ಯ ಜನರನ್ನು ಪ್ರೇರೇಪಿಸುತ್ತಾ ಇದ್ದಾನೆ,” ಎಂದು ಅಲ್ಲಿ ದೂರಿತ್ತರು.</verse>
				<verse number="14">ಪೌಲನು ಮಾತನಾಡಬೇಕೆಂದಿರುವಾಗ, ಗಲ್ಲಿಯೋ ಯೆಹೂದ್ಯರನ್ನು ಸಂಬೋಧಿಸಿ, “ಯೆಹೂದ್ಯರೇ, ಅನ್ಯಾಯವಾಗಲಿ, ಅಕ್ರಮವಾಗಲಿ ನಡೆದಿದ್ದ ಪಕ್ಷದಲ್ಲಿ, ನಿಮ್ಮ ಅಪಾದನೆಗಳನ್ನು ತಾಳ್ಮೆಯಿಂದ ಕೇಳಬೇಕಾದುದು ಸರಿಯಷ್ಟೆ.</verse>
				<verse number="15">ಆದರೆ ಇದು ನಾಮನೇಮಗಳಿಗೆ ಹಾಗು ನಿಮ್ಮ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ಪ್ರಶ್ನೆ. ಅದನ್ನು ನಿಮ್ಮನಿಮ್ಮಲ್ಲೇ ಇತ್ಯರ್ಥಮಾಡಿಕೊಳ್ಳಿ. ಇಂಥ ವಿಷಯಗಳನ್ನು ವಿಚಾರಣೆಮಾಡಲು ನನಗೆ ಮನಸ್ಸಿಲ್ಲ,” ಎಂದು ಹೇಳಿ</verse>
				<verse number="16">ಅವರನ್ನು ನ್ಯಾಯಸ್ಥಾನದಿಂದ ಹೊರಗಟ್ಟಿದನು.</verse>
				<verse number="17">ಆಗ ಅವರೆಲ್ಲರೂ ಪ್ರಾರ್ಥನಾಮಂದಿರದ ಅಧ್ಯಕ್ಷ ಸೋಸ್ಥೆನನನ್ನು ಬಂಧಿಸಿ, ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋ ಇದೊಂದನ್ನೂ ಲಕ್ಷಿಸಲಿಲ್ಲ.</verse>
				<verse number="18">ಇದಾದ ಮೇಲೆ ಪೌಲನು ಕೊರಿಂಥದಲ್ಲಿ ಅನೇಕ ದಿನ ಇದ್ದನು. ಅನಂತರ ಭಕ್ತವಿಶ್ವಾಸಿಗಳನ್ನು ಬೀಳ್ಕೊಟ್ಟು ಅಕ್ವಿಲ ಮತ್ತು ಪ್ರಿಸ್ಸಿಲರೊಡನೆ ಸಿರಿಯಕ್ಕೆ ನೌಕಾಯಾನ ಹೊರಟನು. ತಾನು ಮಾಡಿದ್ದ ಹರಕೆಯ ಪ್ರಕಾರ ಕೆಂಖ್ರೆಯೆಂಬ ಸ್ಥಳದಲ್ಲಿ ಮುಂಡನ ಮಾಡಿಸಿಕೊಂಡನು.</verse>
				<verse number="19">ಎಫೆಸ ನಗರಕ್ಕೆ ಬಂದು ಸೇರಿದಾಗ ಪೌಲನು ತನ್ನ ಸಂಗಡಿಗರನ್ನು ಅಲ್ಲೇ ಬಿಟ್ಟು ಪ್ರಾರ್ಥನಾ ಮಂದಿರಕ್ಕೆ ಹೋಗಿ ಅಲ್ಲಿ ಯೆಹೂದ್ಯರೊಡನೆ ತರ್ಕಮಾಡತೊಡಗಿದನು.</verse>
				<verse number="20">ಆ ಯೆಹೂದ್ಯರು ತಮ್ಮೊಡನೆ ಇನ್ನೂ ಸ್ವಲ್ಪಕಾಲವಿರಬೇಕೆಂದು ಅವನನ್ನು ವಿನಂತಿಸಿದರು. ಆದರೆ ಪೌಲನು ಒಪ್ಪಿಕೊಳ್ಳಲಿಲ್ಲ.</verse>
				<verse number="21">ಅವರನ್ನು ಬೀಳ್ಕೊಡುತ್ತಾ, “ದೇವರ ಚಿತ್ತವಾದರೆ ನಾನು ನಿಮ್ಮಲ್ಲಿಗೆ ಮರಳಿ ಬರುತ್ತೇನೆ,” ಎಂದು ಹೇಳಿ ಎಫೆಸದಿಂದ ಸಮುದ್ರ ಪ್ರಯಾಣಮಾಡಿದನು.</verse>
				<verse number="22">ಅವನು ಸೆಜರೇಯವನ್ನು ಸೇರಿದನು. ಅಲ್ಲಿಂದ ಜೆರುಸಲೇಮಿಗೆ ಹೋಗಿ ಧರ್ಮಸಭೆಯನ್ನು ಸಂಧಿಸಿ ಅಂತಿಯೋಕ್ಯಕ್ಕೆ ಬಂದನು.</verse>
				<verse number="23">ಅಲ್ಲಿ ಕೆಲಕಾಲವಿದ್ದು ಪುನಃ ಹೊರಟು ಗಲಾತ್ಯ ಮತ್ತು ಫ್ರಿಜಿಯ ಪ್ರದೇಶಗಳಲ್ಲಿ ಸಂಚರಿಸುತ್ತಾ ಭಕ್ತರೆಲ್ಲರನ್ನು ದೃಢಪಡಿಸಿದನು.</verse>
				<verse number="24">ಅಲೆಕ್ಸಾಂಡ್ರಿಯದ ಅಪೊಲ್ಲೋಸ್ ಎಂಬ ಯೆಹೂದ್ಯನು ಎಫೆಸಕ್ಕೆ ಬಂದಿದ್ದನು. ಅವನೊಬ್ಬ ಉತ್ತಮ ಭಾಷಣಕಾರ ಹಾಗೂ ಪವಿತ್ರಗ್ರಂಥದಲ್ಲಿ ಪಾಂಡಿತ್ಯಪಡೆದವನು.</verse>
				<verse number="25">ಪ್ರಭುವಿನ ಮಾರ್ಗದ ಬಗ್ಗೆ ಅವನಿಗೆ ಉಪದೇಶಮಾಡಲಾಗಿತ್ತು. ಸ್ನಾನಿಕ ಯೊವಾನ್ನನ ಸ್ನಾನದೀಕ್ಷೆ ಒಂದನ್ನೇ ಅವನು ಬಲ್ಲವನಾಗಿದ್ದನು. ಆದರೂ ಯೇಸುಸ್ವಾಮಿಯ ಬಗ್ಗೆ ಉತ್ಸಾಹಭರಿತನಾಗಿ ಉಪದೇಶಮಾಡಿ ಚ್ಯುತಿಯಿಲ್ಲದೆ ಬೋಧಿಸುತ್ತಾ ಬಂದನು.</verse>
				<verse number="26">ಇವನು ಪ್ರಾರ್ಥನಾಮಂದಿರದಲ್ಲಿ ಧೈರ್ಯದಿಂದ ಮಾತನಾಡುತ್ತಿದ್ದಾಗ, ಪ್ರಿಸ್ಸಿಲ ಮತ್ತು ಅಕ್ವಿಲರು ಅವನ ಬೋಧನೆಯನ್ನು ಕೇಳಿದರು. ಅವನನ್ನು ಮನೆಗೆ ಕರೆದುಕೊಂಡು ಹೋಗಿ ಪ್ರಭುವಿನ ಮಾರ್ಗವನ್ನು ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.</verse>
				<verse number="27">ಇವನು ಅಖಾಯಕ್ಕೆ ಹೋಗಲು ಇಷ್ಟಪಟ್ಟಾಗ ಭಕ್ತಾದಿಗಳು ಅವನನ್ನು ಪ್ರೋತ್ಸಾಹಿಸಿ, ಅಖಾಯದ ಭಕ್ತಾದಿಗಳಿಗೆ ಪತ್ರ ಬರೆದು, ಇವನನ್ನು ಸ್ವಾಗತಿಸುವಂತೆ ಬಿನ್ನವಿಸಿದರು. ಇವನು ಅಲ್ಲಿಗೆ ಹೋಗಿ ದೇವರ ಕೃಪೆಯಿಂದ ವಿಶ್ವಾಸಿಗಳಾಗಿದ್ದವರಿಗೆ ಬಹುವಾಗಿ ನೆರವಾದನು.</verse>
				<verse number="28">ಹೇಗೆಂದರೆ, ಪವಿತ್ರಗ್ರಂಥಾನುಸಾರ ಯೇಸುವೇ ಲೋಕೋದ್ಧಾರಕನೆಂದು ಖಚಿತಪಡಿಸಿ ಯೆಹೂದ್ಯರನ್ನು ಎಲ್ಲರ ಮುಂದೆ ಬಹಿರಂಗವಾಗಿ ಪ್ರತಿಭಟಿಸಿದನು.</verse>
			</chapter>
			<chapter number="19">
				<verse number="1">ಅಪೊಲ್ಲೋಸನು ಕೊರಿಂಥದಲ್ಲಿ ಇದ್ದಾಗ, ಪೌಲನು ಮೇಲ್ನಾಡಿನ ಪ್ರಾಂತ್ಯದ ಮಾರ್ಗವಾಗಿ ಎಫೆಸಕ್ಕೆ ಬಂದನು. ಅಲ್ಲಿ ಕೆಲವು ಮಂದಿ ಶಿಷ್ಯರನ್ನು ಕಂಡು,</verse>
				<verse number="2">“ನೀವು ವಿಶ್ವಾಸಿಸಿದಾಗ ಪವಿತ್ರಾತ್ಮ ಅವರನ್ನು ಪಡೆದಿರೋ?’ ಎಂದು ಕೇಳಿದನು. ಅದಕ್ಕೆ ಅವರು, “ಪವಿತ್ರಾತ್ಮ ಎಂಬವರು ಇದ್ದಾರೆಂದು ನಾವು ಕೇಳಿಯೇ ಇಲ್ಲ,” ಎಂದು ಉತ್ತರಿಸಿದರು.</verse>
				<verse number="3">ಹಾಗಾದರೆ ನೀವು ಯಾವ ಸ್ನಾನದೀಕ್ಷೆಯನ್ನು ಪಡೆದಿರಿ?” ಎಂದು ಪೌಲನು ಕೇಳಲು, “ನಾವು ಯೊವಾನ್ನನ ಸ್ನಾನದೀಕ್ಷೆ ಪಡೆದೆವು,” ಎಂದರು.</verse>
				<verse number="4">ಆಗ ಪೌಲನು, “ಯಾರು ತಮ್ಮ ಪಾಪದಿಂದ ವಿಮುಖರಾಗಿ ದೇವರಿಗೆ ಅಭಿಮುಖರಾಗುತ್ತಿದ್ದರೋ, ಅಂಥವರಿಗೆ ಯೊವಾನ್ನನು ಸ್ನಾನದೀಕ್ಷೆ ಕೊಡುತ್ತಿದ್ದನು. ಆದರೆ ಆ ಯೊವಾನ್ನನೇ ‘ತನ್ನ ಬಳಿಕ ಬರುವಾತನಲ್ಲಿ ವಿಶ್ವಾಸವಿಡಿ; ಅವರೇ ಯೇಸು’ ಎಂದು ಇಸ್ರಯೇಲರಿಗೆ ಬೋಧಿಸಿದ್ದನು,” ಎಂದನು.</verse>
				<verse number="5">ಇದನ್ನು ಕೇಳಿದಾಗ ಅವರು ಪ್ರಭು ಯೇಸುವಿನ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆದರು.</verse>
				<verse number="6">ಪೌಲನು ಅವರ ಮೇಲೆ ಹಸ್ತನಿಕ್ಷೇಪ ಮಾಡಲು ಪವಿತ್ರಾತ್ಮ ಅವರ ಮೇಲೆ ಬಂದರು. ಆಗ ಅವರೆಲ್ಲರೂ ನಾನಾ ಭಾಷೆಗಳನ್ನು ಮಾತನಾಡುತ್ತಾ ಪ್ರವಾದಿಸಿದರು.</verse>
				<verse number="7">ಇವರು ಸುಮಾರು ಹನ್ನೆರಡು ಮಂದಿ ಇದ್ದಿರಬಹುದು.</verse>
				<verse number="8">ಅನಂತರ ಮೂರು ತಿಂಗಳ ಕಾಲ ಪೌಲನು ಪ್ರಾರ್ಥನಾಮಂದಿರಕ್ಕೆ ಹೋಗಿ ಧೈರ್ಯದಿಂದ ಮಾತನಾಡಿದನು. ದೇವರ ಸಾಮ್ರಾಜ್ಯದ ಬಗ್ಗೆ ಅಲ್ಲಿದ್ದವರೊಡನೆ ಚರ್ಚಿಸುತ್ತಾ, ಅವರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸಿದನು.</verse>
				<verse number="9">ಆದರೆ ಅವರಲ್ಲಿ ಕೆಲವರು ಹಠಮಾರಿಗಳು; ಅವರು ವಿಶ್ವಾಸವನ್ನು ನಿರಾಕರಿಸಿದ್ದೂ ಅಲ್ಲದೆ ಈ ಹೊಸಮಾರ್ಗವನ್ನು ಸಭೆಯ ಮುಂದೆ ದೂಷಿಸತೊಡಗಿದರು. ಈ ಕಾರಣ ಪೌಲನು ಅವರನ್ನು ಬಿಟ್ಟು ಶಿಷ್ಯರನ್ನು ಕರೆದುಕೊಂಡು ತುರಾನ್ನ ಎಂಬವನ ತರ್ಕಶಾಲೆಯಲ್ಲಿ ಪ್ರತಿದಿನವೂ ಚರ್ಚೆ ನಡೆಸುತ್ತಾ ಬಂದನು.</verse>
				<verse number="10">ಹೀಗೆ ಎರಡು ವರ್ಷಗಳು ಕಳೆದವು. ಇದರ ಪರಿಣಾಮವಾಗಿ ಏಷ್ಯಾದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಪ್ರಭುವಿನ ವಾಕ್ಯವನ್ನು ಕೇಳಲು ಅನುಕೂಲವಾಯಿತು.</verse>
				<verse number="11">ದೇವರು ಪೌಲನ ಕೈಯಿಂದ ಅಸಾಧಾರಣ ಅದ್ಭುತಗಳನ್ನು ಮಾಡಿಸುತ್ತಿದ್ದರು.</verse>
				<verse number="12">ಅವನು ಬಳಸಿದ ಕರವಸ್ತ್ರಗಳನ್ನೂ ಉಡುವಸ್ತ್ರಗಳನ್ನೂ ಜನರು ತೆಗೆದುಕೊಂಡು ಹೋಗಿ ವ್ಯಾಧಿಸ್ಥರಿಗೆ ಮುಟ್ಟಿಸಿದ್ದೇ, ಅವರ ವ್ಯಾಧಿಗಳು ಗುಣವಾಗುತ್ತಿದ್ದವು; ದೆವ್ವಗಳು ಬಿಟ್ಟುಹೋಗುತ್ತಿದ್ದವು.</verse>
				<verse number="13">“ದೆವ್ವಬಿಡಿಸುವವರು” ಎನಿಸಿಕೊಂಡು ಊರೂರು ಸುತ್ತುತ್ತಿದ್ದ ಕೆಲವು ಯೆಹೂದ್ಯರು ಸಹ ಪ್ರಭು ಯೇಸುವಿನ ನಾಮವನ್ನು ಬಳಸಿ ದೆವ್ವಬಿಡಿಸಲು ಯತ್ನಿಸಿದರು. ಇವರು ದೆವ್ವಗಳಿಗೆ, “ಪೌಲನು ಸಾರುತ್ತಿರುವ ಯೇಸುವಿನ ನಾಮದಲ್ಲಿ ನಿಮಗೆ ಆಣೆಯಿಟ್ಟು ಆಜ್ಞಾಪಿಸುತ್ತೇವೆ,” ಎಂದು ಹೇಳುತ್ತಿದ್ದರು.</verse>
				<verse number="14">ಮುಖ್ಯಯಾಜಕನಾಗಿದ್ದ ಸ್ಕೇವ ಎಂಬವನ ಏಳು ಮಕ್ಕಳು ಹೀಗೆಯೇ ಮಾಡುತ್ತಿದ್ದರು.</verse>
				<verse number="15">ಆದರೆ ಆ ದೆವ್ವ ಅವರಿಗೆ, “ಯೇಸು ನನಗೆ ಗೊತ್ತು, ಪೌಲನನ್ನು ನಾನು ಬಲ್ಲೆ; ಆದರೆ ನೀವು ಯಾರು?” ಎಂದು ಪ್ರಶ್ನಿಸಿತು.</verse>
				<verse number="16">ಅಲ್ಲದೆ ದೆವ್ವ ಹಿಡಿದಿದ್ದ ಮನುಷ್ಯನು ಅವರ ಮೇಲೆ ಹಾರಿಬಿದ್ದು, ಅಪ್ಪಳಿಸಿ, ಅವರೆಲ್ಲರನ್ನೂ ಅಧೀನಪಡಿಸಿದನು. ಅವರು ಗಾಯಗೊಂಡು, ನಗ್ನರಾಗಿ, ಆ ಮನೆಯಿಂದ ಓಡಿಹೋದರು.</verse>
				<verse number="17">ಎಫೆಸದಲ್ಲಿ ವಾಸಿಸುತ್ತಿದ್ದ ಯೆಹೂದ್ಯರೂ ಅನ್ಯಧರ್ಮೀಯರೂ ಈ ವಿಷಯವನ್ನು ಕೇಳಿ ಭಯಭೀತರಾದರು. ಪ್ರಭು ಯೇಸುವಿನ ನಾಮವನ್ನು ಸಂಕೀರ್ತಿಸಿದರು.</verse>
				<verse number="18">ಭಕ್ತವಿಶ್ವಾಸಿಗಳಾದ ಅನೇಕರು ಮುಂದೆ ಬಂದು ತಮ್ಮ ದುಷ್ಕೃತ್ಯಗಳನ್ನು ಬಹಿರಂಗವಾಗಿ ಒಪ್ಪಿಕೊಂಡು ನಿವೇದಿಸಿದರು.</verse>
				<verse number="19">ಮಾಯಮಂತ್ರಮಾಡುತ್ತಿದ್ದ ಅನೇಕರು ತಮ್ಮ ಪುಸ್ತಕಗಳನ್ನು ತೆಗೆದುಕೊಂಡು ಬಂದು ಅವುಗಳನ್ನು ಎಲ್ಲರ ಮುಂದೆ ಸುಟ್ಟುಹಾಕಿದರು. ಆ ಪುಸ್ತಕಗಳ ಬೆಲೆಯನ್ನು ಎಣಿಕೆಮಾಡಿದಾಗ ಅದರ ಮೊತ್ತ ಐವತ್ತು ಸಾವಿರ ಬೆಳ್ಳಿನಾಣ್ಯಗಳಷ್ಟಾಯಿತು.</verse>
				<verse number="20">ಪ್ರಭುವಿನ ವಾಕ್ಯ ಹೀಗೆ ಹಬ್ಬಿಹರಡಿ ಪ್ರಬಲವಾಯಿತು.</verse>
				<verse number="21">ಈ ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯದ ಮೂಲಕ ಜೆರುಸಲೇಮಿಗೆ ಹೋಗಲು ನಿರ್ಧರಿಸಿಕೊಂಡನು. ಅಲ್ಲಿಗೆ ಹೋದ ಮೇಲೆ ರೋಮ್ ನಗರವನ್ನು ಕೂಡ ನೋಡಬೇಕು ಎಂಬುದು ಅವನ ಉದ್ದೇಶ ಆಗಿತ್ತು.</verse>
				<verse number="22">ತನ್ನ ಇಬ್ಬರು ಸಹಾಯಕರಾದ ತಿಮೊಥೇಯ ಮತ್ತು ಎರಾಸ್ತನನ್ನು ಮಕೆದೋನಿಯಕ್ಕೆ ಕಳುಹಿಸಿಬಿಟ್ಟು, ತಾನು ಇನ್ನೂ ಸ್ವಲ್ಪಕಾಲ ಏಷ್ಯದಲ್ಲೇ ಉಳಿದುಕೊಂಡನು.</verse>
				<verse number="23">ಅದೇ ಸಮಯಕ್ಕೆ ಎಫೆಸದಲ್ಲಿ ಕ್ರಿಸ್ತಮಾರ್ಗ ಅನ್ವೇಷಣೆಯ ನಿಮಿತ್ತ ತೀವ್ರಗಲಭೆ ಉಂಟಾಯಿತು.</verse>
				<verse number="24">ಅಲ್ಲಿ ದೆಮೆತ್ರಿಯ ಎಂಬ ಅಕ್ಕಸಾಲಿಗನಿದ್ದನು. ಇವನು ಅರ್ತೆಮೀ ದೇವತೆಯ ಗುಡಿಗೆ ಬೆಳ್ಳಿಯ ಆಕೃತಿಯನ್ನು ಮಾಡುತ್ತಿದ್ದನು. ಈ ಕಸಬುದಾರರಿಗೆ ಇದು ತುಂಬ ಲಾಭದಾಯಕವಾಗಿತ್ತು.</verse>
				<verse number="25">ದೆಮೆತ್ರಿಯನು ಅವರೆಲ್ಲರನ್ನು ಹಾಗೂ ಸಂಬಂಧಪಟ್ಟ ಕಸಬಿನ ಇತರರನ್ನು ಒಟ್ಟುಕೂಡಿಸಿ, “ಮಿತ್ರರೇ, ನಿಮ್ಮ ಸಿರಿಸಂಪತ್ತಿಗೆಲ್ಲಾ ಈ ಕಸಬೇ ಮೂಲಕಾರಣ, ಇದು ನಿಮಗೆ ತಿಳಿದ ವಿಷಯ.</verse>
				<verse number="26">ಪೌಲ ಎಂಬವನು ಏನು ಮಾಡುತ್ತಿರುವನೆಂದು ನೀವು ನೋಡಿದ್ದೀರಿ ಹಾಗೂ ಕೇಳಿದ್ದೀರಿ; ಕೈಯಿಂದ ಮಾಡಿದ ಆಕೃತಿಗಳು ದೇವರೇ ಅಲ್ಲವೆಂದು ಇಲ್ಲಿ ಎಫೆಸದಲ್ಲೂ ಹೆಚ್ಚುಕಡಿಮೆ ಇಡೀ ಏಷ್ಯದಲ್ಲೂ ಪ್ರಚಾರಮಾಡುತ್ತಿದ್ದಾನೆ; ಮಾತ್ರವಲ್ಲ, ಅನೇಕ ಜನರನ್ನು ಮನವೊಲಿಸಿ ಮಾರ್ಪಡಿಸಿಬಿಟ್ಟಿದ್ದಾನೆ.</verse>
				<verse number="27">ಇದರಿಂದಾಗಿ ನಮ್ಮ ಕಸಬಿಗೇ ಕೆಟ್ಟ ಹೆಸರು ಬರುವ ಅಪಾಯವಿದೆ. ಅಷ್ಟೇ ಏಕೆ, ಅರ್ತೆಮೀ ಮಹಾದೇವಿಯ ಗುಡಿ ಹೇಳಹೆಸರಿಲ್ಲದಂತಾಗುವ ಸಂಭವವಿದೆ. ಇಡೀ ಏಷ್ಯದಲ್ಲೂ ಜಗತ್ತಿನ ಎಲ್ಲೆಲ್ಲೂ ಪೂಜಿಸಲಾಗುವ ಆ ದೇವತೆಯ ವೈಭವ ಅಳಿದುಹೋಗುವ ಅಪಾಯವಿದೆ,” ಎಂದನು.</verse>
				<verse number="28">ಈ ಮಾತುಗಳನ್ನು ಕೇಳಿದ ಆ ಜನರು ಕೋಪಾವೇಶದಿಂದ, “ಎಫೆಸದ ಅರ್ತೆಮೀ ದೇವಿಯೇ ಮಹಾದೇವಿ!” ಎಂದು ಆರ್ಭಟಿಸಿದರು.</verse>
				<verse number="29">ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು. ಜನರು ಗುಂಪಾಗಿ ಬಂದು ಪೌಲನ ಸಹಪ್ರಯಾಣಿಕರು ಹಾಗೂ ಮಕೆದೋನಿಯದವರು ಆದ ಗಾಯ ಮತ್ತು ಅರಿಸ್ತಾರ್ಕ ಎಂಬವರನ್ನು ಹಿಡಿದರು. ಅವರನ್ನು ಎಳೆದುಕೊಂಡು ಹೋಗಿ ಕ್ರೀಡಾಂಗಣಕ್ಕೆ ಒಟ್ಟಾಗಿ ನುಗ್ಗಿದರು.</verse>
				<verse number="30">ಇದನ್ನು ತಿಳಿದ ಪೌಲನು ಜನಸಮೂಹದ ಮುಂದೆಹೋಗಿ ನಿಲ್ಲಬೇಕೆಂದು ಇದ್ದನು. ಆದರೆ ಭಕ್ತಾದಿಗಳು ಅವನನ್ನು ಹೋಗಬಿಡಲಿಲ್ಲ.</verse>
				<verse number="31">ಇದೂ ಅಲ್ಲದೆ, ಪೌಲನ ಸ್ನೇಹಿತರಾದ ಕೆಲವು ಸ್ಥಳೀಯ ಅಧಿಕಾರಿಗಳು, ಕ್ರೀಡಾಂಗಣಕ್ಕೆ ಹೋಗುವ ಸಾಹಸವನ್ನು ಮಾಡಕೂಡದೆಂದು ವಿನಂತಿಸಿ, ಪೌಲನಿಗೆ ಹೇಳಿಕಳುಹಿಸಿದರು.</verse>
				<verse number="32">ಸಭೆಯಲ್ಲಿ ಗೊಂದಲವೆದ್ದಿತು, ಕೆಲವರು ಒಂದು ವಿಧದಲ್ಲಿ ಬೊಬ್ಬೆಹಾಕಿದರೆ, ಮತ್ತೆ ಕೆಲವರು ಇನ್ನೊಂದು ವಿಧದಲ್ಲಿ ಕೂಗಾಡಲಾರಂಭಿಸಿದರು. ಬಹುಜನರಿಗೆ ತಾವು ಅಲ್ಲಿಗೆ ಬಂದುದರ ಕಾರಣವೇ ತಿಳಿದಿರಲಿಲ್ಲ.</verse>
				<verse number="33">ಯೆಹೂದ್ಯರು ಅಲೆಕ್ಸಾಂಡರ್ ಎಂಬವನನ್ನು ಸಭೆಯ ಮುಂದಕ್ಕೆ ನೂಕಿದರು. ನೆರೆದಿದ್ದ ಕೆಲವರು ಅವನನ್ನು ಪುಸಲಾಯಿಸಿದರು. ಆಗ ಅಲೆಕ್ಸಾಂಡರನು ಮೌನವಾಗಿರುವಂತೆ ಕೈಸನ್ನೆಮಾಡಿ ಜನರಿಗೆ ಸಮಾಧಾನ ಹೇಳಲು ಪ್ರಯತ್ನಿಸಿದನು.</verse>
				<verse number="34">ಆದರೆ ಅವನು ಯೆಹೂದ್ಯನೆಂದು ಗುರುತಿಸಿದ ಕೂಡಲೇ, ಅವರೆಲ್ಲರೂ ಎರಡು ಗಂಟೆಗಳ ಕಾಲ, “ಎಫೆಸದ ಅರ್ತೆಮೀ ದೇವಿಯೇ ಮಹಾದೇವಿ,” ಎಂದು ಒಂದೇ ಸಮನೆ ಬೊಬ್ಬೆಹಾಕಿದರು.</verse>
				<verse number="35">ಕಟ್ಟಕಡೆಗೆ ಪಟ್ಟಣದ ಅಧಿಕಾರಿ ಒಬ್ಬನು ಜನಸಮೂಹವನ್ನು ಶಾಂತಗೊಳಿಸುತ್ತಾ ಹೀಗೆಂದನು: “ಎಫೆಸದ ಮಹಾಜನರೇ, ಅರ್ತೆಮೀ ಮಹಾದೇವಿಯ ಗುಡಿಯನ್ನು ಹಾಗೂ ಆಕಾಶದಿಂದ ಬಿದ್ದ ಶಿಲೆಯನ್ನು ಎಫೆಸ ಪಟ್ಟಣವು ಎಚ್ಚರಿಕೆಯಿಂದ ಸಂರಕ್ಷಿಸುತ್ತಾ ಬಂದಿದೆ ಎಂಬುದು ಎಲ್ಲರಿಗೂ ತಿಳಿದ ವಿಷಯ.</verse>
				<verse number="36">ಇದನ್ನು ಯಾರೂ ಅಲ್ಲಗಳೆಯುವಂತಿಲ್ಲ; ಆದುದರಿಂದ ನೀವು ಶಾಂತರಾಗಬೇಕು, ದುಡುಕಿ ಏನನ್ನೂ ಮಾಡಬಾರದು.</verse>
				<verse number="37">ನೀವು ಎಳೆದು ತಂದಿರುವ ಈ ವ್ಯಕ್ತಿಗಳು ಗುಡಿಕಳ್ಳರೂ ಅಲ್ಲ, ನಮ್ಮ ದೇವತೆಯ ದೂಷಕರೂ ಅಲ್ಲ.</verse>
				<verse number="38">ದೆಮೆತ್ರಿಯನಿಗೇ ಆಗಲಿ, ಅವನ ಜೊತೆ ಕೆಲಸಗಾರರಿಗೇ ಆಗಲಿ, ಯಾರ ಮೇಲಾದರೂ ಏನಾದರೂ ಆಪಾದನೆ ಇದ್ದರೆ, ಅದಕ್ಕೆ ನ್ಯಾಯಾಲಯಗಳು ತೆರೆದಿವೆ; ರಾಜ್ಯಪಾಲರಿದ್ದಾರೆ; ಅವರು ಅಲ್ಲಿಗೆ ಹೋಗಿ ದೂರು ಕೊಡಲಿ.</verse>
				<verse number="39">ಇದಕ್ಕಿಂತಲೂ ಮಿಗಿಲಾಗಿ ನೀವು ಏನನ್ನಾದರೂ ಅಪೇಕ್ಷಿಸುವುದಾದರೆ, ಅದನ್ನು ಕಾನೂನುಬದ್ಧವಾಗಿ ಸೇರುವ ಸಭೆಯಲ್ಲಿ ತೀರ್ಮಾನಮಾಡಬಹುದು.</verse>
				<verse number="40">ಈ ದಿನ ನಡೆದ ಘಟನೆಯನ್ನು ದಂಗೆಯೆಂದು ನಮ್ಮ ಮೇಲೆ ಆಪಾದನೆ ಹೊರಿಸುವ ಆಸ್ಪದವಿದೆ. ಏಕೆಂದರೆ, ಈ ಗಲಭೆಗೆ ಸರಿಯಾದ ಕಾರಣವನ್ನು ಕೊಟ್ಟು ಸಮರ್ಥಿಸಿಕೊಳ್ಳಲು ನಿಮ್ಮಿಂದಾಗದು,” ಎಂದನು.</verse>
				<verse number="41">ಈ ಮಾತುಗಳನ್ನು ಹೇಳಿದ ಮೇಲೆ ಅವನು ಕೂಟವನ್ನು ಚದರಿಸಿದನು.</verse>
			</chapter>
			<chapter number="20">
				<verse number="1">ಕೋಲಾಹಲವು ಅಡಗಿದ ಮೇಲೆ ಪೌಲನು ಭಕ್ತವಿಶ್ವಾಸಿಗಳನ್ನು ಬರಮಾಡಿಕೊಂಡು ಪ್ರೋತ್ಸಾಹದ ಮಾತುಗಳನ್ನಾಡಿ ಅವರನ್ನು ಬೀಳ್ಕೊಟ್ಟು ಮಕೆದೋನಿಯಕ್ಕೆ ಹೋದನು.</verse>
				<verse number="2">ಆ ಪ್ರದೇಶದಲ್ಲಿ ಸಂಚಾರಮಾಡಿ ಭಕ್ತಾದಿಗಳನ್ನು ಹಲವಾರು ವಿಧದಲ್ಲಿ ಪ್ರೋತ್ಸಾಹಿಸಿದನು. ಅನಂತರ ಅಲ್ಲಿಂದ ಅಖಾಯಕ್ಕೆ ಬಂದನು.</verse>
				<verse number="3">ಇಲ್ಲಿ ಅವನು ಮೂರು ತಿಂಗಳು ಕಳೆದನು. ಬಳಿಕ ಸಿರಿಯಕ್ಕೆ ನೌಕಾಯಾನ ಮಾಡಲು ಸಿದ್ಧನಾಗುತ್ತಿದ್ದಾಗ, ಯೆಹೂದ್ಯರು ಅವನ ವಿರುದ್ಧ ಒಳಸಂಚು ಮಾಡುತ್ತಿರುವುದಾಗಿ ತಿಳಿದುಬಂದಿತು. ಆದುದರಿಂದ ಅವನು ಮಕೆದೋನಿಯದ ಮಾರ್ಗವಾಗಿ ಹಿಂದಿರುಗಲು ನಿರ್ಧರಿಸಿದನು.</verse>
				<verse number="4">ಬೆರೋಯ ಪಟ್ಟಣದ ಪುರನ ಮಗ ಸೋಪತ್ರನು ಅವನೊಡನೆ ಹೋದನು. ಅಂತೆಯೇ ಥೆಸಲೋನಿಕದ ಅರಿಸ್ತಾರ್ಕ ಹಾಗು ಸೆಕುಂದ, ದೆರ್ಬೆ ಪಟ್ಟಣದ ಗಾಯ, ಏಷ್ಯದ ತುಖಿಕ ಹಾಗು ತಿಮೊಥೇಯ ಅವನೊಡನೆ ಹೊರಟರು.</verse>
				<verse number="5">ಇವರು ಮುಂಚಿತವಾಗಿ ಹೋಗಿ ತ್ರೋವದಲ್ಲಿ ನಮಗಾಗಿ ಕಾದಿದ್ದರು.</verse>
				<verse number="6">ನಾವು ಹುಳಿರಹಿತ ರೊಟ್ಟಿಯ ಹಬ್ಬದ ನಂತರ ಫಿಲಿಪ್ಪಿಯಿಂದ ನೌಕಾಯಾನ ಹೊರಟೆವು. ಐದು ದಿನಗಳ ನಂತರ ತ್ರೋವದಲ್ಲಿ ಅವರನ್ನು ಸೇರಿ, ಅಲ್ಲಿ ಏಳುದಿನ ತಂಗಿದೆವು.</verse>
				<verse number="7">ವಾರದ ಮೊದಲನೆಯ ದಿನ ‘ರೊಟ್ಟಿ ಮುರಿಯುವ’ ಸಹಭೋಜನಕ್ಕೆ ನಾವು ಜೊತೆಕೂಡಿದ್ದೆವು. ಪೌಲನು ಮಾರನೆಯ ದಿನ ಅವರನ್ನು ಬಿಟ್ಟುಹೊರಡಬೇಕಾದ್ದರಿಂದ ಉಪನ್ಯಾಸ ಮಾಡಲಾರಂಭಿಸಿ, ಮಧ್ಯರಾತ್ರಿಯವರೆಗೂ ಮುಂದುವರೆಸಿದನು.</verse>
				<verse number="8">ನಾವು ಸಭೆಸೇರಿದ್ದ ಮೇಲಂತಸ್ತಿನ ಕೊಠಡಿಯಲ್ಲಿ ಅನೇಕ ದೀಪಗಳು ಉರಿಯುತ್ತಿದ್ದವು.</verse>
				<verse number="9">ಯುತಿಕ ಎಂಬ ಯುವಕನು ಕಿಟಕಿಯಲ್ಲಿ ಕುಳಿತುಕೊಂಡಿದ್ದನು. ಪೌಲನು ದೀರ್ಘಕಾಲ ಮಾತನಾಡುತ್ತಲೇ ಇದ್ದುದರಿಂದ ಯುತಿಕನಿಗೆ ಗಾಢನಿದ್ರೆ ಹತ್ತಿತು; ತೂಕಡಿಕೆ ಹೆಚ್ಚಾಗಿ ಅವನು ಮೂರನೆಯ ಅಂತಸ್ತಿನಿಂದ ನೆಲಕ್ಕೆ ಬಿದ್ದುಬಿಟ್ಟನು. ಅವನನ್ನು ಎತ್ತಿ ನೋಡುವಾಗ ಅವನು ಸತ್ತಿದ್ದನು.</verse>
				<verse number="10">ಆದರೆ ಪೌಲನು ಕೆಳಗೆ ಇಳಿದುಹೋಗಿ ಅವನ ಮೇಲೆ ಬಾಗಿ, ಅವನನ್ನು ತಬ್ಬಿಕೊಂಡು, “ಚಿಂತಿಸಬೇಡಿ, ಇವನಲ್ಲಿ ಇನ್ನೂ ಜೀವವಿದೆ,” ಎಂದನು.</verse>
				<verse number="11">ಅನಂತರ ಪೌಲನು ಮೇಲಂತಸ್ತಿಗೆ ಹಿಂದಿರುಗಿ, ರೊಟ್ಟಿಯನ್ನು ಮುರಿದು ಸಹಭೋಜನ ಮಾಡಿದನು. ಮುಂಜಾವದವರೆಗೂ ಅವರೊಡನೆ ಮಾತನಾಡಿ ಅಲ್ಲಿಂದ ಹೊರಟುಹೋದನು.</verse>
				<verse number="12">ಜೀವಂತನಾಗಿದ್ದ ಆ ಯುವಕನನ್ನು ಮನೆಗೆ ಕರೆದುಕೊಂಡುಹೋದರು. ಅವರಿಗಾದ ಸಾಂತ್ವನ ಅಷ್ಟಿಷ್ಟಲ್ಲ!</verse>
				<verse number="13">ಪೌಲನು ನಮಗಿತ್ತ ಸೂಚನೆಯ ಪ್ರಕಾರ ನಾವು ಹಡಗುಹತ್ತಿ ಅಸ್ಸೊಸಿ ಎಂಬ ಊರಿಗೆ ಮುಂಚಿತವಾಗಿ ಪ್ರಯಾಣಮಾಡಿದೆವು. ತಾನು ಅಲ್ಲಿಗೆ ಭೂಮಾರ್ಗವಾಗಿ ಬರುವುದಾಗಿಯೂ ಅಲ್ಲಿ ತನ್ನನ್ನು ಹಡಗಿಗೆ ಏರಿಸಿಕೊಳ್ಳಬೇಕೆಂದೂ ಪೌಲನು ತಿಳಿಸಿದ್ದನು.</verse>
				<verse number="14">ಅಂತೆಯೇ ಅಸ್ಸೊಸಿಯಲ್ಲಿ ಅವನನ್ನು ಭೇಟಿಯಾಗಿ ಹಡಗಿಗೆ ಏರಿಸಿಕೊಂಡು ಮಿತಿಲೇನಿಗೆ ಬಂದೆವು.</verse>
				<verse number="15">ಅಲ್ಲಿಂದ ನೌಕಾಯಾನ ಮಾಡಿ ಮರುದಿನ ಖಿಯೋಸ ದ್ವೀಪವನ್ನು ಸಮೀಪಿಸಿ ಮಾರನೆಯ ದಿನ ಸಾಮೋಸನ್ನು ತಲುಪಿದೆವು. ಅದರ ಮಾರನೆಯ ದಿನ ಮಿಲೇತನ್ನು ಸೇರಿದೆವು.</verse>
				<verse number="16">ಸಾಧ್ಯವಾದರೆ ಪಂಚಾಶತ್ತಮ ಹಬ್ಬಕ್ಕೆ ಜೆರುಸಲೇಮಿನಲ್ಲಿರಬೇಕೆಂಬ ಆತುರ ಪೌಲನಿಗೆ ಇದ್ದುದರಿಂದ, ಏಷ್ಯದಲ್ಲಿ ಕಾಲ ವಿಳಂಬಮಾಡಲು ಮನಸ್ಸಿಲ್ಲದೆ, ಎಫೆಸವನ್ನು ದಾಟಿ ಹೋಗಬೇಕೆಂದು ಅವನು ತೀರ್ಮಾನಿಸಿದನು.</verse>
				<verse number="17">ಪೌಲನು ಮಿಲೇತದಿಂದ ಎಫೆಸಕ್ಕೆ ಸಮಾಚಾರ ಕಳುಹಿಸಿ, ಅಲ್ಲಿನ ಧರ್ಮಸಭೆಯ ಪ್ರಮುಖರನ್ನು ಬರಮಾಡಿಕೊಂಡನು.</verse>
				<verse number="18">ಬಂದಮೇಲೆ ಅವರಿಗೆ ಹೀಗೆಂದನು: “ನಾನು ಏಷ್ಯಪ್ರಾಂತ್ಯದಲ್ಲಿ ಕಾಲಿಟ್ಟ ದಿನ ಮೊದಲ್ಗೊಂಡು ಇಂದಿನವರೆಗೆ ನಿಮ್ಮ ಮಧ್ಯೆ ಹೇಗೆ ಬಾಳಿದೆನೆಂದು ನಿಮಗೆ ತಿಳಿದಿದೆ.</verse>
				<verse number="19">ಯೆಹೂದ್ಯರ ಕುತಂತ್ರಗಳಿಂದ ನನಗೆ ಬಂದೊದಗಿದ ಸಂಕಷ್ಟಗಳಲ್ಲಿ ನಾನು ಅತಿ ನಮ್ರತೆಯಿಂದಲೂ ಕಣ್ಣೀರಿಡುತ್ತಲೂ ಪ್ರಭುವಿನ ಸೇವೆಮಾಡಿಕೊಂಡು ಬಂದೆನು.</verse>
				<verse number="20">ನಿಮಗೆ ಹಿತಕರವಾದುದೆಲ್ಲವನ್ನು ಬಹಿರಂಗದಲ್ಲೂ ಮನೆಗಳಲ್ಲೂ ಹಿಂಜರಿಯದೆ ಬೋಧಿಸಿದ್ದೇನೆ ಹಾಗೂ ಕಲಿಸಿದ್ದೇನೆ.</verse>
				<verse number="21">ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎಂದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ.</verse>
				<verse number="22">ಈಗಲಾದರೋ, ಪವಿತ್ರಾತ್ಮ ಪರವಶನಾಗಿ ನಾನು ಜೆರುಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೇನು ಸಂಭವಿಸುವುದೋ ತಿಳಿಯದು.</verse>
				<verse number="23">ಸೆರೆಮನೆ ಹಾಗೂ ಸಂಕಷ್ಟಗಳು ನನಗಾಗಿ ಕಾದಿವೆಯೆಂದು ಪವಿತ್ರಾತ್ಮ ಪ್ರತಿಯೊಂದು ಪಟ್ಟಣದಲ್ಲೂ ಕೊಟ್ಟ ಎಚ್ಚರಿಕೆ ಮಾತ್ರ ಸ್ಪಷ್ಟವಾಗಿದೆ. ನನಗಾದರೋ, ನನ್ನ ಪ್ರಾಣವು ತೃಣಕ್ಕೆ ಸಮಾನ.</verse>
				<verse number="24">ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.</verse>
				<verse number="25">ಇಗೋ, ಇಷ್ಟು ದಿನ ದೇವರ ಸಾಮ್ರಾಜ್ಯವನ್ನು ಪ್ರಕಟಿಸುತ್ತಾ ನಿಮ್ಮ ಮಧ್ಯೆ ಸಂಚರಿಸಿದ ನನ್ನ ಮುಖವನ್ನು ಇನ್ನು ಮುಂದೆ ನೀವು ಯಾರೂ ಕಾಣಲಾರಿರಿ ಎಂದು ನಾನು ಬಲ್ಲೆ.</verse>
				<verse number="26">ಇಂತಿರಲು ನಾನು ನಿಮಗೆ ಸಾರಿ ಹೇಳುವುದೇನೆಂದರೆ - “ನಿಮ್ಮಲ್ಲಿ ಯಾರಾದರು ನಾಶವಾದರೆ, ಅದಕ್ಕೆ ನಾನು ಹೊಣೆಯಲ್ಲ.</verse>
				<verse number="27">ಏಕೆಂದರೆ, ದೈವಯೋಜನೆಯನ್ನು ಕಿಂಚಿತ್ತೂ ಮರೆಮಾಚದೆ ತಿಳಿಯಪಡಿಸಿದ್ದೇನೆ.</verse>
				<verse number="28">ನೀವು ನಿಮ್ಮ ವಿಷಯದಲ್ಲಿ ಹಾಗೂ ಪವಿತ್ರಾತ್ಮ ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿ ಜಾಗರೂಕರಾಗಿರಿ. ಪ್ರಭು ತಮ್ಮ ಸ್ವಂತ ರಕ್ತ ಸುರಿಸಿ ಸಂಪಾದಿಸಿದ ಧರ್ಮಸಭೆಗೆ ಉತ್ತಮ ಕುರಿಗಾಹಿಗಳಾಗಿರಿ.</verse>
				<verse number="29">ನಾನು ಹೋದ ಬಳಿಕ ಕ್ರೂರವಾದ ತೋಳಗಳು ನಿಮ್ಮ ಮಧ್ಯೆ ನುಗ್ಗುವುವು ಎಂದು ನಾನು ಬಲ್ಲೆ. ಅವು ಮಂದೆಗೆ ಹಾನಿಮಾಡದೆ ಬಿಡವು.</verse>
				<verse number="30">ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಭಕ್ತವಿಶ್ವಾಸಿಗಳನ್ನು ತಮ್ಮ ಕಡೆ ಸೆಳೆದುಕೊಳ್ಳಲು ಅಸತ್ಯವಾದವುಗಳನ್ನು ಹೇಳುವರು.</verse>
				<verse number="31">ಆದುದರಿಂದ ಎಚ್ಚರಿಕೆ! ನಾನು ಮೂರು ವರ್ಷಗಳ ಕಾಲ ಹಗಲಿರುಳು ಕಣ್ಣೀರಿಡುತ್ತಾ ಪ್ರತಿಯೊಬ್ಬನಿಗೂ ಬುದ್ಧಿ ಹೇಳಿದ್ದೇನೆಂಬುದನ್ನು ಮರೆಯಬೇಡಿ.</verse>
				<verse number="32">“ಈಗ ನಿಮ್ಮನ್ನು ದೇವರ ಕೈಗೂ, ಅವರ ಅನುಗ್ರಹ ಸಂದೇಶಕ್ಕೂ ಒಪ್ಪಿಸಿಕೊಡುತ್ತೇನೆ. ಅದು ನಿಮ್ಮನ್ನು ಅಭಿವೃದ್ಧಿಗೊಳಿಸಬಲ್ಲದು. ಮಾತ್ರವಲ್ಲ, ಪಾವನಪುರುಷರ ಬಾಧ್ಯತೆಯಲ್ಲಿ ಭಾಗಿಗಳಾಗುವಂತೆ ಮಾಡಬಲ್ಲದು.</verse>
				<verse number="33">ನಾನು ಯಾರ ಬೆಳ್ಳಿಬಂಗಾರಕ್ಕೂ ಬಟ್ಟೆಬರೆಗೂ ಆಶೆಪಟ್ಟವನಲ್ಲ.</verse>
				<verse number="34">ನನ್ನ ಹಾಗೂ ನನ್ನ ಸಂಗಡಿಗರ ಅವಶ್ಯಕತೆಗಳನ್ನು ನೀಗಿಸಲು ಈ ಕೈಗಳೇ ದುಡಿದಿವೆಯೆಂಬುದು ನಿಮ್ಮೆಲ್ಲರಿಗೂ ತಿಳಿದಿದೆ.</verse>
				<verse number="35">ಹೀಗೆ ಕಷ್ಟಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆಂದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. ‘ಕೊಳ್ಳುವ ಕೈಗಿಂತ ಕೊಡುವ ಕೈ ಧನ್ಯವಾದುದು’ ಎಂಬ ಯೇಸುಸ್ವಾಮಿಯ ಮಾತುಗಳನ್ನು ನೆನಪಿನಲ್ಲಿಡಿ.”</verse>
				<verse number="36">ಇಷ್ಟು ಹೇಳಿದ ಮೇಲೆ ಪೌಲನು ಅವರೆಲ್ಲರ ಸಂಗಡ ಮೊಣಕಾಲೂರಿ ಪ್ರಾರ್ಥನೆ ಮಾಡಿದನು.</verse>
				<verse number="37">ಅನಂತರ ಅವರು ಅವನನ್ನು ತಬ್ಬಿಕೊಂಡು ಮುದ್ದಿಟ್ಟು ಬೀಳ್ಕೊಟ್ಟರು. ಅವರ ಕಣ್ಣಲ್ಲಾದರೋ ನೀರು ಧಾರಾಕಾರವಾಗಿ ಹರಿಯುತ್ತಿತ್ತು.</verse>
				<verse number="38">‘ಇನ್ನೆಂದೂ ನೀವು ನನ್ನ ಮುಖವನ್ನು ಕಾಣಲಾರಿರಿ,’ ಎಂಬ ಅವನ ಮಾತು ಅವರನ್ನು ಅತೀವ ದುಃಖಕ್ಕೆ ಈಡುಮಾಡಿತ್ತು. ಅವರು ಹಡಗಿನವರೆಗೂ ಹೋಗಿ ಅವನನ್ನು ಬೀಳ್ಕೊಟ್ಟರು.</verse>
			</chapter>
			<chapter number="21">
				<verse number="1">ನಾವು ಅವರನ್ನು ಬಿಟ್ಟು ಅಗಲಿದ ಮೇಲೆ ನೇರವಾಗಿ ನೌಕಾಯಾನ ಮಾಡಿ ಕೋಸ್‍ದ್ವೀಪಕ್ಕೆ ಬಂದೆವು. ಮರುದಿನ ನಾವು ರೋದ ಎಂಬ ಸ್ಥಳವನ್ನು ತಲುಪಿ ಅಲ್ಲಿಂದ ಪತಾರಕ್ಕೆ ಹೋದೆವು.</verse>
				<verse number="2">ಅಲ್ಲಿ ಫೆನಿಷ್ಯಕ್ಕೆ ಹೋಗುವ ಹಡಗನ್ನು ಕಂಡು ಅದನ್ನೇರಿ ಪ್ರಯಾಣ ಮಾಡಿದೆವು.</verse>
				<verse number="3">ಸೈಪ್ರಸನ್ನು ಸಮೀಪಿಸಿದಾಗ ಅದನ್ನು ಎಡಕ್ಕೆ ಬಿಟ್ಟು ಸಿರಿಯ ದೇಶದ ಕಡೆಗೆ ಸಾಗಿ, ಟೈರ್ ಎಂಬಲ್ಲಿ ಬಂದು ಇಳಿದೆವು. ಇಲ್ಲಿ ಹಡಗಿನ ಸರಕನ್ನು ಇಳಿಸಬೇಕಾಗಿತ್ತು.</verse>
				<verse number="4">ಅಲ್ಲಿಯ ಭಕ್ತಾದಿಗಳನ್ನು ಗುರುತುಹಚ್ಚಿ ಒಂದು ವಾರ ಅವರೊಂದಿಗೆ ಇದ್ದೆವು. ಇವರು ಪವಿತ್ರಾತ್ಮಪ್ರೇರಣೆಯಿಂದ ಜೆರುಸಲೇಮಿಗೆ ಹೋಗಬಾರದೆಂದು ಪೌಲನಿಗೆ ತಿಳಿಸಿದರು.</verse>
				<verse number="5">ಆದರೂ, ಆ ದಿನಗಳು ಕಳೆದ ಮೇಲೆ, ಅವರನ್ನು ಬಿಟ್ಟು ನಮ್ಮ ಪ್ರಯಾಣವನ್ನು ಮುಂದುವರಿಸಲು ಅನುವಾದೆವು. ಅವರಾದರೋ, ಮಡದಿ ಮಕ್ಕಳೊಡನೆ ಪಟ್ಟಣ ಬಿಟ್ಟು ಸಮುದ್ರತೀರದವರೆಗೂ ನಮ್ಮೊಡನೆ ಬಂದರು. ಅಲ್ಲಿ ನಾವೆಲ್ಲರೂ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು.</verse>
				<verse number="6">ಪರಸ್ಪರ ಬೀಳ್ಕೊಡುಗೆಯಾದ ಬಳಿಕ ಹಡಗನ್ನು ಹತ್ತಿದೆವು. ಅವರು ತಮ್ಮ ತಮ್ಮ ಮನೆಗಳಿಗೆ ಹಿಂದಿರುಗಿದರು.</verse>
				<verse number="7">ಟೈರ್‍ನಿಂದ ಹೊರಟು ಪ್ತೊಲೊಮಾಯ ಎಂಬಲ್ಲಿಗೆ ಬಂದಿಳಿದೆವು. ಅಲ್ಲಿ ಭಕ್ತಾದಿಗಳನ್ನು ವಂದಿಸಿ ಅವರೊಡನೆ ಒಂದು ದಿನ ಇದ್ದೆವು.</verse>
				<verse number="8">ಮಾರನೆಯ ದಿನ ಅಲ್ಲಿಂದ ಹೊರಟು ಸೆಜರೇಯಕ್ಕೆ ಬಂದೆವು. ಅಲ್ಲಿ ಶುಭಸಂದೇಶ ಪ್ರಚಾರಕ ಫಿಲಿಪ್ಪನ ಮನೆಗೆ ಹೋಗಿ ಅವನೊಡನೆ ತಂಗಿದೆವು. ಜೆರುಸಲೇಮಿನಲ್ಲಿ ಆಯ್ಕೆಯಾದ ಏಳುಮಂದಿಯಲ್ಲಿ ಇವನೂ ಒಬ್ಬನು.</verse>
				<verse number="9">ಅವನಿಗೆ ನಾಲ್ಕುಮಂದಿ ಅವಿವಾಹಿತ ಹೆಣ್ಣುಮಕ್ಕಳಿದ್ದರು. ಇವರೂ ದೇವರ ವಾಕ್ಯವನ್ನು ಪ್ರಚಾರಮಾಡುತ್ತಿದ್ದರು.</verse>
				<verse number="10">ಅಲ್ಲಿ ನಾವು ಕೆಲವು ದಿನ ಇದ್ದೆವು. ಆಗ ಅಗಬ ಎಂಬ ಪ್ರವಾದಿ ನಮ್ಮನ್ನು ನೋಡಲು ಜುದೇಯದಿಂದ ಬಂದನು.</verse>
				<verse number="11">ಅವನು ಪೌಲನ ಸೊಂಟಪಟ್ಟಿಯನ್ನು ತೆಗೆದುಕೊಂಡು ತನ್ನ ಕೈಕಾಲುಗಳನ್ನು ಬಿಗಿದುಕೊಂಡು, “ಪವಿತ್ರಾತ್ಮ ಹೀಗೆನ್ನುತ್ತಾರೆ: ‘ಈ ಸೊಂಟಪಟ್ಟಿಯು ಯಾರದೋ ಅವನನ್ನು ಜೆರುಸಲೇಮಿನಲ್ಲಿ ಯೆಹೂದ್ಯರು ಹೀಗೆಯೇ ಕಟ್ಟಿ, ಅನ್ಯಧರ್ಮೀಯರ ವಶಕ್ಕೆ ಒಪ್ಪಿಸುವರು,’ “ ಎಂದನು.</verse>
				<verse number="12">ಈ ಮಾತುಗಳನ್ನು ಕೇಳಿದ ನಾವೂ ಅಲ್ಲಿದ್ದವರೂ ಪೌಲನನ್ನು ಜೆರುಸಲೇಮಿಗೆ ಹೋಗಬಾರದೆಂದು ಕಳಕಳಿಯಿಂದ ಕೇಳಿಕೊಂಡೆವು.</verse>
				<verse number="13">ಅದಕ್ಕೆ ಅವನು ಪ್ರತ್ಯುತ್ತರವಾಗಿ, “ನೀವು ಮಾಡುತ್ತಿರುವುದಾದರೂ ಏನು? ನಿಮ್ಮ ಅಳುವಿನಿಂದ ನನ್ನ ಹೃದಯವನ್ನು ಸೀಳುತ್ತಿರುವಿರಾ? ನಾನು ಜೆರುಸಲೇಮಿನಲ್ಲಿ ಬಂಧಿತನಾಗುವುದಕ್ಕೆ ಮಾತ್ರವಲ್ಲ, ಪ್ರಭು ಯೇಸುವಿಗಾಗಿ ಸಾಯುವುದಕ್ಕೂ ಸಿದ್ಧನಾಗಿದ್ದೇನೆ,” ಎಂದನು.</verse>
				<verse number="14">ಪೌಲನು ಸಮ್ಮತಿಸುವುದಿಲ್ಲವೆಂದು ನಮಗೆ ಸ್ಪಷ್ಟವಾದಾಗ “ಪ್ರಭುವಿನ ಚಿತ್ತದಂತೆ ಆಗಲಿ,” ಎಂದು ಸುಮ್ಮನಾದೆವು.</verse>
				<verse number="15">ಕೆಲವು ದಿನಗಳಾದ ಮೇಲೆ ನಾವು ಪ್ರಯಾಣ ಸಿದ್ಧತೆಗಳನ್ನು ಮಾಡಿಕೊಂಡು ಹೊರಟೆವು.</verse>
				<verse number="16">ಸೆಜರೇಯ ಪಟ್ಟಣದಿಂದ ಕೆಲವು ಶಿಷ್ಯರು ನಮ್ಮೊಡನೆ ಬಂದರು. ನಾವು ತಂಗಲಿದ್ದ ಸೈಪ್ರಸಿನ ಮ್ನಾಸೋನ ಎಂಬವನ ಮನೆಗೆ ಅವರು ನಮ್ಮನ್ನು ಕರೆದುಕೊಂಡು ಹೋದರು. ಈ ಮ್ನಾಸೋನನು ಆದಿಶಿಷ್ಯರಲ್ಲಿ ಒಬ್ಬನಾಗಿದ್ದನು.</verse>
				<verse number="17">ನಾವು ಜೆರುಸಲೇಮಿಗೆ ಬಂದಾಗ ಅಲ್ಲಿನ ಸಹೋದರರು ನಮ್ಮನ್ನು ಸಂತೋಷದಿಂದ ಸ್ವಾಗತಿಸಿದರು.</verse>
				<verse number="18">ಮಾರನೆಯ ದಿನ ಪೌಲನು ನಮ್ಮನ್ನು ಕರೆದುಕೊಂಡು ಯಕೋಬನನ್ನು ನೋಡಲು ಹೋದನು. ಧರ್ಮಸಭೆಯ ಹಿರಿಯರೆಲ್ಲರೂ ಅಲ್ಲಿ ಹಾಜರಿದ್ದರು.</verse>
				<verse number="19">ಪೌಲನು ಅವರಿಗೆ ನಮಸ್ಕರಿಸಿ ತನ್ನ ಸೇವೆಯ ಮೂಲಕ ದೇವರು ಯೆಹೂದ್ಯೇತರರ ಮಧ್ಯೆ ಮಾಡಿದ ಮಹತ್ಕಾರ್ಯಗಳನ್ನು ಒಂದೊಂದಾಗಿ ವರದಿಮಾಡಿದನು.</verse>
				<verse number="20">ಇದನ್ನು ಕೇಳಿದ ಅವರು ದೇವರನ್ನು ಕೊಂಡಾಡಿದರು. ಅನಂತರ ಅವರು ಪೌಲನಿಗೆ ಹೀಗೆಂದರು: \ಸಹೋದರಾ, ನಿನಗೆ ತಿಳಿದಿರುವಂತೆ ಯೆಹೂದ್ಯರಲ್ಲಿ ಭಕ್ತವಿಶ್ವಾಸಿಗಳಾಗಿರುವವರು ಸಾವಿರಾರು ಮಂದಿ ಇದ್ದಾರೆ; ಅವರೆಲ್ಲರೂ ಯೆಹೂದ್ಯ ಧರ್ಮಶಾಸ್ತ್ರದಲ್ಲಿ ಬಹಳ ಶ್ರದ್ಧೆ ಉಳ್ಳವರು.</verse>
				<verse number="21">ನಿನ್ನ ವಿಷಯ ಅವರಿಗೆ ತಿಳಿದುಬಂದಿದೆ. ಅದೇನೆಂದರೆ ನೀನು ಅನ್ಯಧರ್ಮೀಯರ ನಡುವೆ ವಾಸಿಸುತ್ತಿರುವ ಯೆಹೂದ್ಯರೆಲ್ಲರಿಗೆ, ‘ನೀವು ಮೋಶೆಯ ನೇಮನಿಯಮಗಳನ್ನು ಅನುಸರಿಸಬಾರದು, ನಿಮ್ಮ ಮಕ್ಕಳಿಗೆ ಸುನ್ನತಿಯನ್ನು ಮಾಡಿಸಬಾರದು, ಯೆಹೂದ್ಯ ಸಂಪ್ರದಾಯಗಳನ್ನು ಆಚರಿಸಬಾರದು,’ ಎಂದು ಬೋಧಿಸುತ್ತಿರುವಿಯಂತೆ.</verse>
				<verse number="22">ನೀನು ಇಲ್ಲಿಗೆ ಬಂದಿರುವುದು ಅವರಿಗೆ ಖಂಡಿತವಾಗಿ ತಿಳಿದೇ ತಿಳಿಯುತ್ತದೆ. ಈಗ ಏನು ಮಾಡೋಣ?</verse>
				<verse number="23">ಆದುದರಿಂದ ನಾವು ಹೇಳಿದಂತೆ ಮಾಡು; ನಮ್ಮಲ್ಲಿ ಹರಕೆಹೊತ್ತಿರುವವರು ನಾಲ್ಕುಮಂದಿ ಇದ್ದಾರೆ.</verse>
				<verse number="24">ನೀನು ಅವರನ್ನು ಕರೆದುಕೊಂಡು ಹೋಗಿ ಅವರ ಜೊತೆಯಲ್ಲಿ ನೀನೂ ಶುದ್ಧಾಚಾರವಿಧಿಯನ್ನು ಮಾಡಿಸಿಕೊ. ಅವರ ಖರ್ಚುವೆಚ್ಚವನ್ನೆಲ್ಲಾ ನೀನೇ ವಹಿಸಿಕೋ. ಅವರು ಮುಂಡನ ಮಾಡಿಸಿಕೊಳ್ಳಲಿ. ಹೀಗೆ ಮಾಡಿದರೆ, ನಿನ್ನ ಬಗ್ಗೆ ಅವರು ಕೇಳಿಸಿಕೊಂಡಿರುವ ವಿಷಯ ನಿಜವಲ್ಲವೆಂದೂ ನೀನು ಕೂಡ ಮೋಶೆಯ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯುತ್ತಿರುವೆ ಎಂದೂ ಅವರೆಲ್ಲರಿಗೂ ಮನವರಿಕೆಯಾಗುವುದು.</verse>
				<verse number="25">ವಿಶ್ವಾಸಿಗಳಾಗಿರುವ ಯೆಹೂದ್ಯೇತರಿಗಾದರೋ ನಾವೀಗಲೇ ಪತ್ರವನ್ನು ಕಳುಹಿಸಿದ್ದೇವೆ. ಅದರಲ್ಲಿ ಅವರು ವಿಗ್ರಹಗಳಿಗೆ ಅರ್ಪಿಸಿದ ನೈವೇದ್ಯವನ್ನು ಸೇವಿಸಬಾರದು, ಅನೈತಿಕತೆಯಿಂದ ದೂರವಿರಬೇಕು, ರಕ್ತವನ್ನಾಗಲೀ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳನ್ನಾಗಲೀ ತಿನ್ನಬಾರದು, ಎಂದು ತೀರ್ಮಾನಕೊಟ್ಟಿದ್ದೇವೆ,” ಎಂದರು.</verse>
				<verse number="26">ಅಂತೆಯೇ ಪೌಲನು ಮಾರನೆಯ ದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ಮಹಾದೇವಾಲಯಕ್ಕೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು.</verse>
				<verse number="27">ಶುದ್ಧಾಚಾರದ ಏಳು ದಿನಗಳ ಅವಧಿ ಮುಗಿಯುತ್ತಿದ್ದಂತೆ ಏಷ್ಯದ ಕೆಲವು ಯೆಹೂದ್ಯರು ಪೌಲನನ್ನು ದೇವಾಲಯದಲ್ಲಿ ಕಂಡರು. ಕೂಡಲೇ ಅವರು ಜನಸಮೂಹವನ್ನು ಉದ್ರೇಕಿಸಿ ಪೌಲನನ್ನು ಹಿಡಿದರು.</verse>
				<verse number="28">“ಇಸ್ರಯೇಲಿನ ಮಹಾಜನರೇ, ಬೇಗ ಬನ್ನಿ; ನಮ್ಮ ಜನಾಂಗಕ್ಕೂ ನಮ್ಮ ಧರ್ಮಶಾಸ್ತ್ರಕ್ಕೂ ಈ ಮಹಾದೇವಾಲಯಕ್ಕೂ ವಿರುದ್ಧವಾಗಿ ಬೋಧಿಸುವ ವ್ಯಕ್ತಿ ಇವನೇ; ಎಲ್ಲೆಡೆಯಲ್ಲೂ ಎಲ್ಲರಿಗೂ ಇವನು ನಮಗೆ ವಿರುದ್ಧವಾಗಿ ಬೋಧಿಸುತ್ತಾನೆ. ಅಷ್ಟು ಮಾತ್ರವಲ್ಲ. ಈ ಪವಿತ್ರಾಲಯದೊಳಕ್ಕೆ ಅನ್ಯಧರ್ಮೀಯರನ್ನು ಕರೆತಂದು ಇದನ್ನು ಭ್ರಷ್ಟಗೊಳಿಸಿದ್ದಾನೆ,” ಎಂದು ಕೂಗಿಕೊಂಡರು.</verse>
				<verse number="29">ಎಫೆಸದ ತ್ರೊಫಿಮ ಎಂಬವನು ಪೌಲನ ಸಂಗಡ ಪಟ್ಟಣದಲ್ಲಿ ಇದ್ದುದನ್ನು ಅವರು ನೋಡಿದ್ದರು. ಈಗ ಅವನನ್ನೂ ದೇವಾಲಯದೊಳಕ್ಕೆ ಪೌಲನು ಕರೆದುಕೊಂಡು ಬಂದಿರಬಹುದೆಂದು ಅವರು ಭಾವಿಸಿದರು.</verse>
				<verse number="30">ಪಟ್ಟಣದಲ್ಲೆಲ್ಲಾ ಕೋಲಾಹಲವೆದ್ದಿತು. ಜನರು ನಾಲ್ಕು ದಿಕ್ಕುಗಳಿಂದಲೂ ಓಡಿಬಂದರು. ಪೌಲನನ್ನು ದೇವಾಲಯದಿಂದ ಹೊರಗೆ ಎಳೆದುಹಾಕಿ ಮಹಾದೇವಾಲಯದ ದ್ವಾರಗಳನ್ನು ಮುಚ್ಚಿದರು.</verse>
				<verse number="31">ಜನರ ಗುಂಪು ಪೌಲನನ್ನು ಕೊಲ್ಲಲು ಯತ್ನಿಸುತ್ತಿದ್ದಾಗ ಜೆರುಸಲೇಮಿನಾದ್ಯಂತ ಗಲಭೆಯುಂಟಾಗಿದೆ ಎಂದು ಅಲ್ಲಿನ ರೋಮ್ ಸೈನ್ಯಾಧಿಪತಿಗೆ ವರದಿ ಬಂದಿತು.</verse>
				<verse number="32">ಆ ಕ್ಷಣವೇ, ಅವನು ಕೆಲವು ಶತಾಧಿಪತಿಗಳನ್ನೂ ಸೈನಿಕರನ್ನೂ ಕರೆದುಕೊಂಡು ಜನಸಮೂಹವಿದ್ದ ಕಡೆ ಧಾವಿಸಿದನು. ಸೈನಿಕರೊಡನೆ ಬರುತ್ತಿರುವ ಸೈನ್ಯಾಧಿಪತಿಯನ್ನು ಕಂಡು ಜನರು ಪೌಲನನ್ನು ಹೊಡೆಯುವುದನ್ನು ನಿಲ್ಲಿಸಿದರು.</verse>
				<verse number="33">ಸೈನ್ಯಾಧಿಪತಿ ಹತ್ತಿರಕ್ಕೆ ಬಂದು, ಪೌಲನನ್ನು ಬಂಧಿಸಿ ಎರಡು ಸರಪಣಿಗಳಿಂದ ಅವನನ್ನು ಕಟ್ಟುವಂತೆ ಆಜ್ಞಾಪಿಸಿದನು. “ಇವನು ಯಾರು? ಇವನು ಮಾಡಿದ್ದೇನು?” ಎಂದು ವಿಚಾರಿಸಿದನು.</verse>
				<verse number="34">ಜನಜಂಗುಳಿಯಲ್ಲಿ ಹಲವರು ಹಲವಿಧವಾಗಿ ಕೂಗಾಡತೊಡಗಿದರು. ಗದ್ದಲ ಹೆಚ್ಚಾಗಿದ್ದುದರಿಂದ ಸೈನ್ಯಾಧಿಪತಿಗೆ ನಿಜಸ್ಥಿತಿಯನ್ನು ತಿಳಿಯಲಾಗಲಿಲ್ಲ. ಆದುದರಿಂದ ಪೌಲನನ್ನು ಕೋಟೆಯೊಳಕ್ಕೆ ಕೊಂಡೊಯ್ಯುವಂತೆ ಆಜ್ಞಾಪಿಸಿದನು.</verse>
				<verse number="35">ಪೌಲನನ್ನು ಮೆಟ್ಟಲುಗಳವರೆಗೆ ಕರೆದುಕೊಂಡು ಬರಲಾಯಿತು. ಅನಂತರ ಜನರ ನೂಕುನುಗ್ಗಲಿನ ನಿಮಿತ್ತ ಅವನನ್ನು ಸೈನಿಕರು ಹೊತ್ತುಕೊಂಡು ಹೋಗಬೇಕಾಯಿತು.</verse>
				<verse number="36">ಜನರು, “ಅವನನ್ನು ಕೊಲ್ಲಿ, ಕೊಲ್ಲಿ,” ಎಂದು ಆರ್ಭಟಿಸುತ್ತಾ ಬೆನ್ನಟ್ಟಿ ಬರುತ್ತಿದ್ದರು.</verse>
				<verse number="37">ಪೌಲನನ್ನು ಕೋಟೆಯೊಳಕ್ಕೆ ಕೊಂಡು ಒಯ್ಯುತ್ತಿದ್ದಾಗ, ಅವನು ಸೈನ್ಯಾಧಿಪತಿಗೆ, “ನಾನು ನಿಮ್ಮೊಡನೆ ಸ್ವಲ್ಪ ಮಾತಾಡಬಹುದೇ?’ ಎಂದನು. ಅದಕ್ಕೆ ಅವನು, “ನಿನಗೆ ಗ್ರೀಕ್‍ಭಾಷೆಯೂ ಗೊತ್ತಿದೆಯಾ?</verse>
				<verse number="38">ಹಾಗಾದರೆ ಕೆಲವು ಕಾಲದ ಹಿಂದೆ ಕ್ರಾಂತಿಯೆಬ್ಬಿಸಿ ನಾಲ್ಕು ಸಾವಿರ ಡಕಾಯಿತರನ್ನು ಅಡವಿಗೆ ಕರೆದುಕೊಂಡು ಹೋದ ಈಜಿಪ್ಟಿನವನು ನೀನೇ ಅಲ್ಲವೇ?’ ಎಂದು ಪ್ರಶ್ನಿಸಿದನು.</verse>
				<verse number="39">ಪೌಲನು ಪ್ರತ್ಯುತ್ತರವಾಗಿ, “ನಾನು ಯೆಹೂದ್ಯನು, ತಾರ್ಸದವನು, ಸಿಲಿಸಿಯ ಪ್ರಾಂತ್ಯದ ಪ್ರಖ್ಯಾತ ಪಟ್ಟಣದವನು. ಈ ಜನರೊಡನೆ ಮಾತನಾಡಲು ದಯವಿಟ್ಟು ಅವಕಾಶಕೊಡಿ,” ಎಂದು ಭಿನ್ನವಿಸಿದನು.</verse>
				<verse number="40">ಸೈನ್ಯಾಧಿಪತಿ ಅಪ್ಪಣೆ ಕೊಡಲು, ಪೌಲನು ಮೆಟ್ಟಲಿನ ಮೇಲೆ ನಿಂತು ಜನರನ್ನು ನೋಡಿ ಮೌನವಾಗಿರುವಂತೆ ಕೈಸನ್ನೆ ಮಾಡಿದನು. ಆಗ ನಿಶ್ಯಬ್ದ ಉಂಟಾಯಿತು. ಅನಂತರ ಅವರನ್ನು ಸಂಬೋಧಿಸಿ ಹಿಬ್ರುಭಾಷೆಯಲ್ಲಿ ಮಾತಾಡುತ್ತಾ ಹೀಗೆಂದನು:</verse>
			</chapter>
			<chapter number="22">
				<verse number="1">“ಭ್ರಾತೃಗಳೇ, ಪಿತೃಗಳೇ, ಈಗ ನಾನು ಮಾಡಹೋಗುವ ನನ್ನ ಸಮರ್ಥನೆಗೆ ಕಿವಿಗೊಡಿ.”</verse>
				<verse number="2">ಪೌಲನು ಹೀಗೆ ತಮ್ಮನ್ನು ಸಂಬೋಧಿಸಿ ಹಿಬ್ರು ಭಾಷೆಯಲ್ಲಿ ಮಾತನಾಡುವುದನ್ನು ಕೇಳಿದ್ದೇ ಅಲ್ಲಿದ್ದ ಜನರು ಇನ್ನೂ ನಿಶ್ಯಬ್ಧರಾದರು. ಅವನು ಮುಂದುವರಿಯುತ್ತಾ ಇಂತೆಂದನು:</verse>
				<verse number="3">“ನಾನೊಬ್ಬ ಯೆಹೂದ್ಯನು, ಸಿಲಿಸಿಯದ ತಾರ್ಸ ಎಂಬಲ್ಲಿ ಹುಟ್ಟಿದವನು. ಆದರೆ, ಇದೇ ಜೆರುಸಲೇಮಿನಲ್ಲಿ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪೂರ್ವಜರ ಧರ್ಮಶಾಸ್ತ್ರವನ್ನು ಕಟ್ಟುನಿಟ್ಟಾಗಿ ಕಲಿತವನು. ಇಲ್ಲಿ ಇಂದು ನೆರೆದಿರುವ ನೀವೆಲ್ಲರೂ ದೈವಾಭಿಮಾನಿಗಳಾಗಿರುವಂತೆಯೇ ನಾನು ದೈವಾಭಿಮಾನಿಯಾಗಿದ್ದೆ.</verse>
				<verse number="4">ಕ್ರಿಸ್ತಮಾರ್ಗವನ್ನು ಅನುಸರಿಸುವವರನ್ನು ಸ್ತ್ರೀ ಪುರುಷರೆನ್ನದೆ, ಬಂಧಿಸಿ ಅವರನ್ನು ಸೆರೆಮನೆಗೆ ತಳ್ಳಿದೆ. ಅವರನ್ನು ಮರಣಪರಿಯಂತರ ಪೀಡಿಸಿ ಹಿಂಸಿಸಿದೆ.</verse>
				<verse number="5">ಇದಕ್ಕೆ ಪ್ರಧಾನಯಾಜಕರು ಮತ್ತು ಪ್ರಮುಖರ ಇಡೀ ಸಭೆಯೇ ಸಾಕ್ಷಿ. ನಾನು ಅವರಿಂದಲೇ ದಮಸ್ಕಸಿನಲ್ಲಿರುವ ಯೆಹೂದ್ಯ ಬಾಂಧವರಿಗೆ ಪತ್ರಗಳನ್ನು ಪಡೆದು, ಆ ಪಟ್ಟಣಕ್ಕೆ ಹೊರಟೆ. ಅಲ್ಲಿಂದ ಕ್ರೈಸ್ತರನ್ನು ಬಂಧಿಸಿ, ಜೆರುಸಲೇಮಿಗೆ ತಂದು ಶಿಕ್ಷಿಸಬೇಕೆಂಬುದೇ ನನ್ನ ಉದ್ದೇಶವಾಗಿತ್ತು.</verse>
				<verse number="6">“ಹೀಗೆ ಪ್ರಯಾಣ ಮಾಡುತ್ತಾ ದಮಸ್ಕಸನ್ನು ಸಮೀಪಿಸಿದೆ. ಆಗ ಸುಮಾರು ನಡುಮಧ್ಯಾಹ್ನ. ಇದ್ದಕ್ಕಿದ್ದಂತೆ ಆಕಾಶದಿಂದ ಮಹಾಬೆಳಕೊಂದು ನನ್ನ ಸುತ್ತಲೂ ಮಿಂಚಿತು.</verse>
				<verse number="7">ನಾನು ನೆಲಕ್ಕುರುಳಿದೆ. ಆಗ ‘ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ?’ ಎಂಬ ವಾಣಿ ಕೇಳಿಸಿತು.</verse>
				<verse number="8">ನಾನು ‘ಪ್ರಭೂ, ನೀವಾರು?’ ಎಂದು ಕೇಳಿದೆ. ‘ನೀನು ಹಿಂಸೆಪಡಿಸುತ್ತಿರುವ ನಜರೇತಿನ ಯೇಸುವೇ ನಾನು,’ ಎಂದರು ಅವರು.</verse>
				<verse number="9">ನನ್ನೊಡನೆ ಇದ್ದವರಿಗೆ ಬೆಳಕೇನೋ ಕಾಣಿಸಿತು. ಆದರೆ ನನ್ನೊಡನೆ ಮಾತಾಡುತ್ತಿದ್ದ ವಾಣಿ ಅವರಿಗೆ ಕೇಳಿಸಲಿಲ್ಲ.</verse>
				<verse number="10">‘ನಾನೇನು ಮಾಡಬೇಕು ಪ್ರಭೂ,?’ ಎಂದು ಕೇಳಿದೆ. ಅದಕ್ಕೆ ಪ್ರಭು, ‘ಏಳು, ದಮಸ್ಕಸಿಗೆ ಹೋಗು, ನೀನು ಏನು ಮಾಡಬೇಕೆಂದು ನಿಶ್ಚಯಿಸಲಾಗಿದೆಯೋ ಅದೆಲ್ಲವನ್ನೂ ನಿನಗೆ ತಿಳಿಸಲಾಗುವುದು,’ ಎಂದು ಹೇಳಿದರು.</verse>
				<verse number="11">ಬೆಳಕಿನ ಪ್ರಕಾಶದ ನಿಮಿತ್ತ ದೃಷ್ಟಿಹೀನನಾದೆ. ಜೊತೆಯಲ್ಲಿದ್ದವರು ನನ್ನನ್ನು ದಮಸ್ಕಸಿಗೆ ಕೈಹಿಡಿದು ನಡೆಸಿಕೊಂಡು ಹೋದರು.</verse>
				<verse number="12">“ದಮಸ್ಕಸಿನಲ್ಲಿ ಅನನೀಯ ಎಂಬ ಒಬ್ಬ ವ್ಯಕ್ತಿ ಇದ್ದನು. ಅವನು ಧರ್ಮಶಾಸ್ತ್ರಕ್ಕೆ ಪ್ರಾಮಾಣಿಕನಾಗಿ ಬಾಳಿದವನು. ಆ ಊರಿನ ಸಮಸ್ತ ಯೆಹೂದ್ಯರಿಂದ ಸನ್ಮಾನಿತನು.</verse>
				<verse number="13">ಅವನು ಬಂದು ನನ್ನ ಬಳಿ ನಿಂತು, ‘ಸಹೋದರ ಸೌಲನೇ, ದೃಷ್ಟಿಯನ್ನು ಪಡೆ,’ ಎಂದನು. ಆ ಕ್ಷಣವೇ ನಾನು ದೃಷ್ಟಿಪಡೆದು ಅವನನ್ನು ನೋಡಿದೆ.</verse>
				<verse number="14">ಆಗ ಅವನು, ‘ನಮ್ಮ ಪೂರ್ವಜರ ದೇವರು ತಮ್ಮ ಚಿತ್ತವನ್ನು ನೀನು ಅರಿಯಬೇಕೆಂದು, ತಮ್ಮ ಸತ್ಯಸ್ವರೂಪಿಯನ್ನು ನೀನು ನೋಡಬೇಕೆಂದು, ತಮ್ಮ ಕಂಠಸ್ವರವನ್ನು ನೀನು ಕೇಳಬೇಕೆಂದು ನಿನ್ನನ್ನು ಆರಿಸಿಕೊಂಡಿದ್ದಾರೆ.</verse>
				<verse number="15">ನೀನು ಕಂಡು ಕೇಳಿದ ವಿಷಯಗಳಿಗೆ ನೀನೇ ಎಲ್ಲ ಜನರಿಗೆ ಅವರ ಪರವಾಗಿ ಸಾಕ್ಷಿಯಾಗಬೇಕು.</verse>
				<verse number="16">ಇನ್ನು ತಡಮಾಡುವುದೇಕೆ? ಏಳು, ಅವರ ನಾಮವನ್ನು ಜಪಿಸಿ, ದೀಕ್ಷಾಸ್ನಾನವನ್ನು ಪಡೆದು ನಿನ್ನ ಪಾಪಗಳನ್ನು ತೊಳೆದುಕೊ,’ ಎಂದನು.</verse>
				<verse number="17">“ನಾನು ಜೆರುಸಲೇಮಿಗೆ ಹಿಂದಿರುಗಿ ಒಂದು ದಿನ ಮಹಾದೇವಾಲಯದಲ್ಲಿ ಪ್ರಾರ್ಥನೆ ಮಾಡುತ್ತಾ ಧ್ಯಾನಪರವಶನಾದೆ.</verse>
				<verse number="18">ಆಗ ಪ್ರಭುವೇ ನನಗೆ ದರ್ಶನವಿತ್ತು, ‘ತಡಮಾಡದೆ ನೀನು ಜೆರುಸಲೇಮಿನಿಂದ ಹೊರಟುಹೋಗು. ನನ್ನ ಬಗ್ಗೆ ನೀನು ಕೊಡುವ ಸಾಕ್ಷಿಯನ್ನು ಇಲ್ಲಿಯ ಜನರು ಸ್ವೀಕರಿಸುವುದಿಲ್ಲ,’ ಎಂದರು.</verse>
				<verse number="19">ಅದಕ್ಕೆ ಪ್ರತ್ಯುತ್ತರವಾಗಿ ನಾನು, ‘ಪ್ರಭೂ, ನಿಮ್ಮಲ್ಲಿ ವಿಶ್ವಾಸವಿಟ್ಟವರನ್ನು ನಾನು ಸೆರೆಹಿಡಿದೆ; ಪ್ರಾರ್ಥನಾಮಂದಿರಗಳಿಗೆ ಹೋಗಿ ಅವರನ್ನು ಚಾವಟಿಯಿಂದ ಹೊಡೆದೆ.</verse>
				<verse number="20">ನಿಮ್ಮ ಸಾಕ್ಷಿಯಾದ ಸ್ತೇಫನನ ಹತ್ಯೆ ನಡೆದಾಗ ನಾನೂ ಸಮ್ಮತಿಸಿ ಅಲ್ಲೇ ಇದ್ದೆ. ಅವನನ್ನು ಕೊಲೆಮಾಡುತ್ತಿದ್ದವರ ಬಟ್ಟೆಬರೆಗಳಿಗೆ ನಾನೇ ಕಾವಲು ನಿಂತೆ. ಇದೆಲ್ಲ ಅವರಿಗೆ ಚೆನ್ನಾಗಿ ಗೊತ್ತಿದೆ,’ ಎಂದೆ. ಅದಕ್ಕೆ ಪ್ರಭು,</verse>
				<verse number="21">‘ಹೋಗು ನಾನು ನಿನ್ನನ್ನು ದೂರದಲ್ಲಿರುವ ಅನ್ಯಧರ್ಮೀಯರ ಬಳಿಗೆ ಕಳುಹಿಸುತ್ತೇನೆ,’ ಎಂದರು.</verse>
				<verse number="22">ಇಲ್ಲಿಯವರೆಗೆ ಪೌಲನು ಹೇಳುತ್ತಿದ್ದನ್ನು ಜನರು ಕಿವಿಗೊಟ್ಟು ಕೇಳುತ್ತಿದ್ದರು. ಆಮೇಲೆ ಅವರು, “ಇವನು ಈ ಲೋಕದಿಂದಲೇ ತೊಲಗಬೇಕು; ಇಂಥವನು ಜೀವದಿಂದ ಇರಬಾರದು,” ಎಂದು ಗಟ್ಟಿಯಾಗಿ ಕೂಗಾಡಲಾರಂಭಿಸಿದರು.</verse>
				<verse number="23">ಹೀಗೆ ಚೀರುತ್ತಾ, ತಮ್ಮ ವಸ್ತ್ರಗಳನ್ನು ಬೀಸುತ್ತಾ, ಮಣ್ಣನ್ನು ಬಾಚಿ ತೂರಲಾರಂಭಿಸಿದರು.</verse>
				<verse number="24">ಜನರು ಯಾವ ಕಾರಣದಿಂದ ಅವನ ವಿರುದ್ಧ ಹೀಗೆ ಮಾಡುತ್ತಿದ್ದಾರೆಂದು ಅರಿತುಕೊಳ್ಳಲು ಸಹಸ್ರಾಧಿಪತಿ ಪೌಲನನ್ನು ಕೋಟೆ ಒಳಕ್ಕೆಕೊಂಡೊಯ್ದು, ಚಾವಟಿಯಿಂದ ಹೊಡೆದು ವಿಚಾರಿಸುವಂತೆ ಆಜ್ಞಾಪಿಸಿದನು.</verse>
				<verse number="25">ಹೊಡೆಯುವುದಕ್ಕಾಗಿ ಅವನನ್ನು ಬಾರುಗಳಿಂದ ಕಟ್ಟುತ್ತಿದ್ದಾಗ ಪೌಲನು, ಹತ್ತಿರವೇ ನಿಂತಿದ್ದ ಶತಾಧಿಪತಿಯನ್ನು ನೋಡಿ, “ರೋಮಿನ ಪೌರನನ್ನು ಚಾವಟಿಯಿಂದ ಹೊಡೆಯುವುದು, ಅದೂ ವಿಚಾರಣೆಮಾಡದೆ ಹೊಡೆಯಿಸುವುದು, ನ್ಯಾಯಸಮ್ಮತವೋ?” ಎಂದು ಕೇಳಿದನು.</verse>
				<verse number="26">ಇದನ್ನು ಕೇಳಿದ್ದೇ, ಶತಾಧಿಪತಿಯು ಸೈನ್ಯಾಧಿಪತಿಯ ಬಳಿಗೆ ಬಂದು, “ನೀವು ಮಾಡಿಸುತ್ತಿರುವುದಾದರೂ ಏನು? ಆ ಮನುಷ್ಯ ರೋಮಿನ ಪೌರನು,” ಎಂದು ತಿಳಿಸಿದನು.</verse>
				<verse number="27">ಆಗ ಸಹಸ್ರಾಧಿಪತಿ ಪೌಲನ ಬಳಿಗೆ ಬಂದು, “ನೀನು ರೋಮಿನ ಪೌರನೋ?’ ಎಂದು ಕೇಳಿದನು.</verse>
				<verse number="28">ಅದಕ್ಕೆ ಪೌಲನು, “ಹೌದು,” ಎಂದನು. “ನಾನು ರೋಮಿನ ಪೌರನಾಗುವ ಹಕ್ಕನ್ನು ಬಹಳ ಹಣತೆತ್ತು ಪಡೆಯಬೇಕಾಯಿತು,” ಎಂದು ಸಹಸ್ರಾಧಿಪತಿ ಹೇಳಿದಾಗ, ಪೌಲನು, “ನಾನು ಹುಟ್ಟಿದಂದಿನಿಂದಲೇ ರೋಮಿನ ಪೌರನು,” ಎಂದು ಉತ್ತರಿಸಿದನು.</verse>
				<verse number="29">ಪೌಲನನ್ನು ಪ್ರಶ್ನಿಸಲು ಬಂದಿದ್ದವರು ಆ ಕ್ಷಣವೇ ಅವನನ್ನು ಬಿಟ್ಟು ಅಗಲಿದರು. ರೋಮಿನ ಪೌರನೊಬ್ಬನನ್ನು ಬಂಧಿಸಿದುದು ಮನವರಿಕೆಯಾದಾಗ ಸಹಸ್ರಾಧಿಪತಿಗೂ ಭಯವಾಯಿತು.</verse>
				<verse number="30">ಯೆಹೂದ್ಯರು ಪೌಲನ ವಿರುದ್ಧ ತಂದ ಆಪಾದನೆ ಏನೆಂದು ಖಚಿತವಾಗಿ ತಿಳಿದುಕೊಳ್ಳಲು ಸಹಸ್ರಾಧಿಪತಿ ಅಪೇಕ್ಷಿಸಿದನು. ಮಾರನೆಯ ದಿನ ಪೌಲನನ್ನು ಬಿಡುಗಡೆ ಮಾಡಿದನು. ಮುಖ್ಯಯಾಜಕರು ಮತ್ತು ನ್ಯಾಯಸಭೆಯ ಪ್ರಮುಖರು ಕೂಡುವಂತೆ ಆಜ್ಞಾಪಿಸಿದನು. ಪೌಲನನ್ನು ಕರೆದುಕೊಂಡು ಹೋಗಿ ಆ ಸಭೆಯ ಮುಂದೆ ನಿಲ್ಲಿಸಿದನು.</verse>
			</chapter>
			<chapter number="23">
				<verse number="1">ಪೌಲನು ಆ ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ಬಂಧುಭಾಂದವರೇ, ಈ ದಿನದವರೆಗೂ ನಾನು ದೇವರ ಸಮ್ಮುಖದಲ್ಲಿ ನನ್ನ ಮನಸ್ಸಾಕ್ಷಿಯ ಪ್ರಕಾರ ಬಾಳಿದ್ದೇನೆ,” ಎಂದನು.</verse>
				<verse number="2">ಇದನ್ನು ಕೇಳಿದ್ದೇ, ಪ್ರಧಾನ ಯಾಜಕ ಅನನೀಯನು ಪೌಲನ ಬಾಯಮೇಲೆ ಹೊಡೆಯುವಂತೆ ಹತ್ತಿರದಲ್ಲೇ ನಿಂತಿದ್ದವರಿಗೆ ಆಜ್ಞಾಪಿಸಿದನು.</verse>
				<verse number="3">ಪೌಲನು ಅವನಿಗೆ, ‘ಸುಣ್ಣಬಳಿದ ಗೋಡೆ ನೀನು; ದೇವರು ನಿನ್ನನ್ನು ಹೊಡೆಯದೆ ಬಿಡರು; ಧರ್ಮಶಾಸ್ತ್ರದ ಪ್ರಕಾರ ನ್ಯಾಯವಿಚಾರಣೆ ಮಾಡಲು ಕುಳಿತಿರುವ ನೀನು ಅದೇ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ನನ್ನನ್ನು ಹೊಡೆಯುವಂತೆ ಆಜ್ಞಾಪಿಸುತ್ತಿರುವೆಯಾ?” ಎಂದನು.</verse>
				<verse number="4">ಪಕ್ಕದಲ್ಲಿದ್ದವರು, “ದೇವರೇ ನೇಮಿಸಿದ ಪ್ರಧಾನ ಯಾಜಕರನ್ನು ನಿಂದಿಸುತ್ತೀಯೋ?” ಎಂದರು.</verse>
				<verse number="5">ಪ್ರತ್ಯುತ್ತರವಾಗಿ ಪೌಲನು, “ಸಹೋದರರೇ, ಇವರು ಪ್ರಧಾನ ಯಾಜಕರೆಂದು ನನಗೆ ತಿಳಿಯದೆ ಹೋಯಿತು. ‘ನಿಮ್ಮ ಪ್ರಜಾಪಾಲನನ್ನು ದೂಷಿಸಬೇಡ’ ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ ಅಲ್ಲವೆ?” ಎಂದನು.</verse>
				<verse number="6">ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯ ಪಂಥದವರು ಮತ್ತೆ ಕೆಲವರು ಫರಿಸಾಯ ಪಂಥದವರು. ಇದನ್ನು ಗಮನಿಸಿದ ಪೌಲನು, “ಸಹೋದರರೇ, ನಾನೊಬ್ಬ ಫರಿಸಾಯ, ಫರಿಸಾಯರ ವಂಶಜ. ಸತ್ತವರು ಪುನರುತ್ಥಾನ ಹೊಂದುತ್ತಾರೆ ಎಂಬ ನಮ್ಮ ನಿರೀಕ್ಷೆಯ ನಿಮಿತ್ತ ನಾನು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಧ್ವನಿಯೆತ್ತಿ ಸಭೆಯಲ್ಲಿ ಹೇಳಿದನು.</verse>
				<verse number="7">ಅವನು ಹೀಗೆ ಹೇಳಿದಾಕ್ಷಣವೇ, ಫರಿಸಾಯರ ಮತ್ತು ಸದ್ದುಕಾಯರ ನಡುವೆ ವಾಗ್ವಾದ ಉಂಟಾಯಿತು. ಸಭೆಯಲ್ಲಿ ಭಿನ್ನಭೇದವುಂಟಾಯಿತು.</verse>
				<verse number="8">ಏಕೆಂದರೆ, ಸದ್ದುಕಾಯರು ಪುನರುತ್ಥಾನವಾಗಲಿ, ದೇವದೂತರಾಗಲಿ, ದೇಹರಹಿತ ಆತ್ಮವಾಗಲಿ ಇದೆಯೆಂದು ಒಪ್ಪುವುದಿಲ್ಲ. ಆದರೆ ಫರಿಸಾಯರು ಇವೆಲ್ಲಾ ಇವೆಯೆಂದು ನಂಬುತ್ತಾರೆ.</verse>
				<verse number="9">ಆಗ ಅಲ್ಲಿ ದೊಡ್ಡ ಕೂಗಾಟವೆದ್ದಿತು. ಫರಿಸಾಯ ಪಂಥಕ್ಕೆ ಸೇರಿದ ಕೆಲವು ಧರ್ಮಶಾಸ್ತ್ರಿಗಳು ಎದ್ದು ನಿಂತು, “ಈ ಮನುಷ್ಯನಲ್ಲಿ ನಮಗೆ ಯಾವ ದೋಷವೂ ಕಾಣುವುದಿಲ್ಲ. ಒಂದು ಆತ್ಮವೋ ಅಥವಾ ಒಬ್ಬ ದೂತನೋ ಇವನೊಡನೆ ಮಾತನಾಡಿದ್ದರೂ ಮಾತನಾಡಿರಬಹುದು,” ಎಂದು ವಾದಿಸಿದರು.</verse>
				<verse number="10">ಈ ವಾಗ್ವಾದ ವಿಕೋಪಕ್ಕೆ ಹೋದುದರಿಂದ ಪೌಲನನ್ನು ಅವರು ಖಂಡತುಂಡಾಗಿಸಬಹುದೆಂದು ಸಹಸ್ರಾಧಿಪತಿ ಹೆದರಿದನು. ಅವನು ಸೈನಿಕರನ್ನು ಕಳುಹಿಸಿ ಪೌಲನನ್ನು ಸಭೆಯ ಮಧ್ಯದಿಂದ ಎತ್ತಿಕೊಂಡು ಕೋಟೆಗೆ ತರುವಂತೆ ಆಜ್ಞಾಪಿಸಿದನು.</verse>
				<verse number="11">ಪ್ರಭು ಅದೇ ರಾತ್ರಿ ಪೌಲನಿಗೆ ಹತ್ತಿರದಲ್ಲೇ ಕಾಣಿಸಿಕೊಂಡು, “ಧೈರ್ಯದಿಂದಿರು, ನೀನು ಜೆರುಸಲೇಮಿನಲ್ಲಿ ನನಗೆ ಸಾಕ್ಷಿಕೊಟ್ಟಂತೆ ರೋಮಿನಲ್ಲೂ ನನಗೆ ಸಾಕ್ಷಿಕೊಡಬೇಕಾಗಿದೆ,” ಎಂದರು.</verse>
				<verse number="12">ಮಾರನೆಯ ದಿನ ಬೆಳಿಗ್ಗೆ ಕೆಲವು ಯೆಹೂದ್ಯರು ಒಟ್ಟುಗೂಡಿ ಒಳಸಂಚುಹೂಡಿದರು. ಪೌಲನನ್ನು ಕೊಲ್ಲುವ ತನಕ ತಾವು ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥ ಮಾಡಿದರು.</verse>
				<verse number="13">ಈ ಒಳಸಂಚು ಮಾಡಿದವರು ನಾಲ್ವತ್ತಕ್ಕೂ ಹೆಚ್ಚುಮಂದಿ.</verse>
				<verse number="14">ಇವರು ಮುಖ್ಯಯಾಜಕರ ಮತ್ತು ಪ್ರಮುಖರ ಬಳಿಗೆ ಹೋಗಿ ಇಂತೆಂದರು: “ನಾವು ಪೌಲನನ್ನು ಕೊಲ್ಲುವ ತನಕ ಏನನ್ನೂ ತಿನ್ನುವುದಿಲ್ಲವೆಂದು ಕಠಿಣ ಶಪಥಮಾಡಿಕೊಂಡಿದ್ದೇವೆ.</verse>
				<verse number="15">ಆದುದರಿಂದ ನೀವು ನ್ಯಾಸಭೆಯವರೊಂದಿಗೆ ಸೇರಿ ಪೌಲನನ್ನು ನಿಮ್ಮ ಬಳಿಗೆ ಕರೆದುತರಬೇಕೆಂದು ಸಹಸ್ರಾಧಿಪತಿಗೆ ಹೇಳಿಕಳುಹಿಸಿರಿ. ಅವನ ಬಗ್ಗೆ ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕಾಗಿದೆಯೆಂದು ನಟಿಸಿರಿ. ನಾವು ಹೊಂಚುಹಾಕಿಕೊಂಡಿದ್ದು ಅವನು ಇಲ್ಲಿಗೆ ಬರುವ ಮೊದಲೇ ಅವನನ್ನು ಸಂಹರಿಸಿಬಿಡುತ್ತೇವೆ,” ಎಂದರು.</verse>
				<verse number="16">ಈ ಒಳಸಂಚು ಪೌಲನ ಸೋದರಿಯ ಮಗನ ಕಿವಿಗೆ ಬಿದ್ದಿತು. ಅವನು ಕೋಟೆಯೊಳಗೆ ಹೋಗಿ ಅದನ್ನು ಪೌಲನಿಗೆ ತಿಳಿಸಿದನು.</verse>
				<verse number="17">ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆದು, “ಈ ಯುವಕನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; ಇವನು ಅವರಿಗೆ ತಿಳಿಸಬೇಕಾದ ವಿಷಯ ಒಂದಿದೆ,” ಎಂದನು.</verse>
				<verse number="18">ಅಂತೆಯೇ, ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ, “ಕೈದಿ ಪೌಲನು, ನನ್ನನ್ನು ಕರೆದು, ಈ ಯುವಕನನ್ನು ನಿಮ್ಮಲ್ಲಿಗೆ ಕರೆದುಕೊಂಡು ಬರಲು ತಿಳಿಸಿದನು. ನಿಮಗೆ ಹೇಳಬೇಕಾದ ವಿಷಯವೇನೋ ಇದೆಯಂತೆ,” ಎಂದನು.</verse>
				<verse number="19">ಆಗ ಸಹಸ್ರಾಧಿಪತಿ ಆ ಯುವಕನ ಕೈಹಿಡಿದು, ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, “ನೀನು ನನಗೆ ಹೇಳಬೇಕೆಂದು ಇರುವ ವಿಷಯವೇನು?” ಎಂದು ವಿಚಾರಿಸಿದನು.</verse>
				<verse number="20">ಅದಕ್ಕೆ ಆ ಯುವಕನು, “ಯೆಹೂದ್ಯರು ಒಂದುಗೂಡಿ ಒಂದು ತೀರ್ಮಾನ ಕೈಗೊಂಡಿದ್ದಾರೆ. ಅದರ ಪ್ರಕಾರ ಪೌಲನ ಬಗ್ಗೆ ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕಾಗಿದೆಯೆಂದು ನಟಿಸಿ, ಅವನನ್ನು ನಾಳೆ ನ್ಯಾಯಸಭೆಯ ಮುಂದೆ ಹಾಜರುಪಡಿಸುವಂತೆ ಕೇಳಿಕೊಳ್ಳಲಿದ್ದಾರೆ.</verse>
				<verse number="21">ಆದರೆ ನೀವು ಅವರ ಮಾತನ್ನು ನಂಬಬೇಡಿ. ಏಕೆಂದರೆ, ನಾಲ್ವತ್ತಕ್ಕೂ ಹೆಚ್ಚು ಮಂದಿ ಅವನಿಗಾಗಿ ಹೊಂಚುಹಾಕಿ ಕಾದುಕೊಂಡಿರುತ್ತಾರೆ. ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿದ್ದಾರೆ. ಈಗ ಅವರು ನಿಮ್ಮ ಅನುಮತಿಯನ್ನು ಎದುರು ನೋಡುತ್ತಾ ಕಾಯುತ್ತಿದ್ದಾರೆ,” ಎಂದನು.</verse>
				<verse number="22">“ಈ ವಿಷಯವನ್ನು ನೀನು ನನಗೆ ವರದಿಮಾಡಿರುವುದಾಗಿ ತಿಳಿಸಬೇಡ,” ಎಂದು ಸಹಸ್ರಾಧಿಪತಿ ಆ ಯುವಕನಿಗೆ ಆಜ್ಞೆಮಾಡಿ ಅವನನ್ನು ಕಳುಹಿಸಿಬಿಟ್ಟನು.</verse>
				<verse number="23">ಅನಂತರ ಸಹಸ್ರಾಧಿಪತಿ ಇಬ್ಬರು ಶತಾಧಿಪತಿಗಳನ್ನು ಕರೆದು ಹೀಗೆಂದನು: “ಈ ರಾತ್ರಿ ಒಂಬತ್ತು ಗಂಟೆಗೆ ಸೆಜರೇಯ ಪಟ್ಟಣಕ್ಕೆ ಹೊರಡಲು ಇನ್ನೂರು ಮಂದಿ ಸೈನಿಕರನ್ನೂ ಎಪ್ಪತ್ತು ಮಂದಿ ಕುದುರೆ ಸವಾರರನ್ನೂ ಇನ್ನೂರು ಮಂದಿ ಭರ್ಜಿ ಆಳುಗಳನ್ನೂ ಸಿದ್ಧಗೊಳಿಸಿರಿ.</verse>
				<verse number="24">ಕುದುರೆಗಳನ್ನು ಸಜ್ಜುಗೊಳಿಸಿ ಪೌಲನನ್ನು ಏರಿಸಿ, ರಾಜ್ಯಪಾಲ ಫೆಲಿಕ್ಸರ ಬಳಿಗೆ ಭದ್ರವಾಗಿ ಕರೆದುಕೊಂಡು ಹೋಗಿರಿ.”</verse>
				<verse number="25">ಇದೂ ಅಲ್ಲದೆ ಸಹಸ್ರಾಧಿಪತಿ ಬರೆದುಕೊಟ್ಟ ಪತ್ರ ಹೀಗಿತ್ತು:</verse>
				<verse number="26">“ಮಹಾಪ್ರಭುಗಳಾದ ರಾಜ್ಯಪಾಲ ಫೆಲಿಕ್ಸ್ ಅವರ ಸನ್ನಿಧಾನಕ್ಕೆ - ಕ್ಲಾಡಿಯಲೂಸಿಯನು ಮಾಡುವ ಪ್ರಣಾಮಗಳು.</verse>
				<verse number="27">ಈ ವ್ಯಕ್ತಿಯನ್ನು ಯೆಹೂದ್ಯರು ಹಿಡಿದು ಕೊಲ್ಲುವುದರಲ್ಲಿದ್ದರು. ಇವನು ರೋಮಿನ ಪೌರನೆಂದು ತಿಳಿದು, ನಾನು ಸೈನಿಕರೊಡನೆ ಹೋಗಿ ಇವನನ್ನು ಬಿಡಿಸಿದೆ.</verse>
				<verse number="28">ಇವನ ಮೇಲೆ ಅವರು ಹೊರಿಸಿರುವ ಆಪಾದನೆಗಳು ಏನೆಂದು ತಿಳಿದುಕೊಳ್ಳುವ ಉದ್ದೇಶದಿಂದ ನಾನು ಇವನನ್ನು ಅವರ ನ್ಯಾಯಸಭೆಯಲ್ಲಿ ಹಾಜರುಪಡಿಸಿದೆ.</verse>
				<verse number="29">ಅಲ್ಲಿ ನನಗೆ ಕಂಡುಬಂದ ಪ್ರಕಾರ ಅವರ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಇವನ ಮೇಲೆ ಆಪಾದನೆ ಹೊರಿಸಲಾಯಿತೇ ಹೊರತು ಮರಣದಂಡನೆಗಾಗಲಿ, ಸೆರೆಮನೆಗಾಗಲಿ, ಇವನನ್ನು ಗುರಿಪಡಿಸಬಹುದಾದ ಅಪರಾಧವೇನೂ ಇರಲಿಲ್ಲ.</verse>
				<verse number="30">ಆದರೂ ಇವನ ವಿರುದ್ಧ ಒಳಸಂಚು ನಡೆಯುತ್ತಲೇ ಇದೆಯೆಂದು ನನಗೆ ತಿಳಿದುಬಂದಿತು. ಕೂಡಲೇ ನಾನು ಇವನನ್ನು ತಮ್ಮ ಬಳಿಗೆ ಕಳುಹಿಸಿದ್ದೇನೆ. ಇವನ ಮೇಲೆ ತಪ್ಪುಹೊರಿಸುವವರು ತಮ್ಮ ಸನ್ನಿಧಾನದಲ್ಲೇ ಬಂದು ಆ ಆಪಾದನೆಗಳನ್ನು ನಿವೇದಿಸಬಹುದೆಂದು ಅಪ್ಪಣೆಮಾಡಿದ್ದೇನೆ.”</verse>
				<verse number="31">ಸೈನಿಕರು ಈ ಆಜ್ಞೆಯನ್ನು ಶಿರಸಾವಹಿಸಿ ಪೌಲನನ್ನು ಆ ರಾತ್ರಿ ಅಂತಿಪತ್ರಿಯ ಎಂಬ ಊರಿನವರೆಗೆ ಕರೆದುಕೊಂಡು ಹೋದರು.</verse>
				<verse number="32">ಮರುದಿನ ಪೌಲನೊಂದಿಗೆ ಮುಂದೆಹೋಗಲು ಕುದುರೆ ಸವಾರರನ್ನು ಬಿಟ್ಟು, ಸೈನಿಕರು ಕೋಟೆಗೆ ಹಿಂದಿರುಗಿದರು.</verse>
				<verse number="33">ಸವಾರರು ಸೆಜರೇಯವನ್ನು ತಲುಪಿ ರಾಜ್ಯಪಾಲನಿಗೆ ಪತ್ರವನ್ನು ಕೊಟ್ಟು ಪೌಲನನ್ನು ಅವನ ವಶಕ್ಕೊಪ್ಪಿಸಿದರು.</verse>
				<verse number="34">ರಾಜ್ಯಪಾಲನು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದ ನಿವಾಸಿ ಎಂದು ವಿಚಾರಿಸಿ ಅವನು ಸಿಲಿಸಿಯದಿಂದ ಬಂದವನೆಂದು ತಿಳಿದುಕೊಂಡನು.</verse>
				<verse number="35">“ನಿನ್ನ ಮೇಲೆ ತಪ್ಪು ಹೊರಿಸಿದವರು ಬಂದ ಮೇಲೆ ನಿನ್ನ ವಿಚಾರಣೆ ಮಾಡುತ್ತೇನೆ,” ಎಂದು ಹೇಳಿ ಪೌಲನನ್ನು ಹೆರೋದನ ಅರಮನೆಯಲ್ಲಿ ಕಾವಲಿನಲ್ಲಿ ಇಡಬೇಕೆಂದು ಆಜ್ಞಾಪಿಸಿದನು.</verse>
			</chapter>
			<chapter number="24">
				<verse number="1">ಐದು ದಿನಗಳ ನಂತರ ಪ್ರಧಾನಯಾಜಕ ಅನನೀಯನು, ಕೆಲವು ಪ್ರಮುಖರನ್ನೂ ತೆರ್ತುಲ್ಲ ಎಂಬ ವಕೀಲನನ್ನೂ ಕರೆದುಕೊಂಡು ಬಂದನು. ಅವರು ರಾಜ್ಯಪಾಲ ಫೆಲಿಕ್ಸನ ಸನ್ನಿಧಾನದಲ್ಲಿ ಪೌಲನ ವಿರುದ್ಧ ದೂರಿತ್ತರು.</verse>
				<verse number="2">ಪೌಲನನ್ನು ಕರೆದುತಂದು ನಿಲ್ಲಿಸಿದಾಗ ತೆರ್ತುಲ್ಲನು ಅವನ ವಿರುದ್ಧ ಹೀಗೆಂದು ವಾದಿಸಲಾರಂಭಿಸಿದನು: “ಮಹಾಪ್ರಭುವೇ, ನಿಮ್ಮ ಮುಖಂಡತ್ವದಲ್ಲಿ ನಾವು ಶಾಂತಿ ಸೌಭಾಗ್ಯವನ್ನು ಸವಿಯುತ್ತಿದ್ದೇವೆ. ದೇಶ ಪ್ರಗತಿಗಾಗಿ ಆಗುತ್ತಿರುವ ಸುಧಾರಣೆಗಳಿಗೆ ತಮ್ಮ ಪರಾಮರಿಕೆಯೇ ಕಾರಣ.</verse>
				<verse number="3">ಇದನ್ನು ನಾವು ಎಲ್ಲೆಲ್ಲೂ ಯಾವಾಗಲೂ ಪೂರ್ಣ ಕೃತಜ್ಞತೆಯಿಂದ ಸ್ಮರಿಸಿಕೊಳ್ಳುತ್ತೇವೆ.</verse>
				<verse number="4">ನಾನು ತಮ್ಮ ಸಮಯವನ್ನು ವ್ಯರ್ಥಮಾಡಲು ಇಚ್ಛಿಸುವುದಿಲ್ಲ. ಸಂಕ್ಷಿಪ್ತವಾಗಿ ನಾನು ತಮ್ಮ ಮುಂದಿಡುವ ಈ ವಾದವನ್ನು ದಯೆಯಿಂದ ಆಲಿಸಬೇಕೆಂದು ವಿಜ್ಞಾಪಿಸುತ್ತೇನೆ.</verse>
				<verse number="5">ಈ ವ್ಯಕ್ತಿ ಒಂದು ದೊಡ್ಡ ಪೀಡೆ. ಯೆಹೂದ್ಯರು ಜಗತ್ತಿನಲ್ಲಿ ಎಲ್ಲೇ ಇರಲಿ, ಅಲ್ಲೆಲ್ಲಾ ಕಲಹವೆಬ್ಬಿಸುತ್ತಾನೆ. ಅಲ್ಲದೆ, ‘ನಜರೇನ’ ಎಂಬ ಕುಪ್ರಸಿದ್ಧ ಪಂಥದ ಒಬ್ಬ ಮುಖಂಡನೂ ಆಗಿದ್ದಾನೆ.</verse>
				<verse number="6">ಇವನು ಮಹಾದೇವಾಲಯವನ್ನು ಭ್ರಷ್ಟಗೊಳಿಸಲು ಪ್ರಯತ್ನಿಸಿದ. ಅಷ್ಟರಲ್ಲಿ ನಾವು ಇವನನ್ನು ಬಂಧಿಸಿದೆವು. ನಮ್ಮ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ಇವನನ್ನು ವಿಚಾರಣೆಗೆ ಒಳಪಡಿಸಬೇಕೆಂದಿದ್ದೆವು.</verse>
				<verse number="7">ಆದರೆ, ಸಹಸ್ರಾಧಿಪತಿ ಲೂಸಿಯನು ಮಧ್ಯೆಬಂದು ಬಲಾತ್ಕಾರದಿಂದ ಇವನನ್ನು ನಮ್ಮಿಂದ ಬಿಡಿಸಿಕೊಂಡನು.</verse>
				<verse number="8">ಹಾಗೂ ಇವನ ಮೇಲೆ ತಪ್ಪುಹೊರಿಸುವವರು ತಮ್ಮ ಮುಂದೆ ಬರಬೇಕೆಂದು ಆಜ್ಞೆಯಿತ್ತನು; ತಾವೇ ಕೇಳಿನೋಡಿ; ನಾವು ಇವನ ವಿರುದ್ಧ ತಂದಿರುವ ದೂರುಗಳೆಲ್ಲಾ ಸತ್ಯವಾದುವು ಎಂದು ಇವನಿಂದಲೇ ತಮಗೆ ವ್ಯಕ್ತ ಆಗುವುದು,” ಎಂದನು.</verse>
				<verse number="9">ಯೆಹೂದ್ಯರೂ ವಕೀಲನಿಗೆ ಬೆಂಬಲವಾಗಿ ಅವನು ಹೇಳಿದ್ದೆಲ್ಲಾ ಸತ್ಯವೆಂದು ಸಾಧಿಸಿದರು.</verse>
				<verse number="10">ರಾಜ್ಯಪಾಲನು ಪೌಲನಿಗೆ ಸನ್ನೆಮಾಡಿ ಮಾತನಾಡುವಂತೆ ಅಪ್ಪಣೆ ಮಾಡಿದನು. ಆಗ ಪೌಲನು ಹೀಗೆಂದನು: “ತಾವು ಅನೇಕ ವರ್ಷಗಳಿಂದ ಈ ನಾಡಿನ ನ್ಯಾಯಾಧೀಶರಾಗಿದ್ದೀರಿ. ಅದನ್ನು ಅರಿತು ನಿರ್ಭಯನಾಗಿ ಪ್ರತಿವಾದವನ್ನು ತಮ್ಮ ಮುಂದಿಡುತ್ತೇನೆ.</verse>
				<verse number="11">ನಾನು ಜೆರುಸಲೇಮಿಗೆ ದೈವಾರಾಧನೆಗೆಂದು ಹೋಗಿ ಇಲ್ಲಿಗೆ ಹನ್ನೆರಡು ದಿನಗಳಿಗಿಂತ ಹೆಚ್ಚಾಗಿಲ್ಲ. ಇದನ್ನು ತಾವೇ ವಿಚಾರಿಸಿ ತಿಳಿದುಕೊಳ್ಳಬಹುದು.</verse>
				<verse number="12">ನಾನು ದೇವಾಲಯದಲ್ಲಾಗಲಿ, ಪ್ರಾರ್ಥನಾಮಂದಿರದಲ್ಲಾಗಲಿ, ಪಟ್ಟಣದಲ್ಲಾಗಲಿ, ಯಾವ ವಾದವಿವಾದ ನಡೆಸಿದ್ದನ್ನು ಅಥವಾ ಜನರನ್ನು ಪ್ರಚೋದಿಸಿದ್ದನ್ನು ಇವರಾರೂ ಕಂಡಿಲ್ಲ.</verse>
				<verse number="13">ಇವರು ಈಗ ನನ್ನ ಮೇಲೆ ಹೊರಿಸುವ ಆಪಾದನೆಗಳನ್ನು ತಮ್ಮ ಮುಂದೆ ಸಮರ್ಥಿಸಲು ಇವರಿಂದಾಗದು.</verse>
				<verse number="14">ಇಷ್ಟನ್ನು ಮಾತ್ರ ನಾನು ಒಪ್ಪಿಕೊಳ್ಳುತ್ತೇನೆ: ಇವರು ಕುಪ್ರಸಿದ್ಧವೆಂದು ನಿಂದಿಸುವ ಮಾರ್ಗವನ್ನು ಅನುಸರಿಸುವವನು ನಾನು. ಆ ಮಾರ್ಗದ ಪ್ರಕಾರ ನಮ್ಮ ಪೂರ್ವಜರ ದೇವರನ್ನು ಆರಾಧಿಸುತ್ತೇನೆ. ಧರ್ಮಶಾಸ್ತ್ರದಲ್ಲೂ ಪ್ರವಾದಿಗಳ ಗ್ರಂಥದಲ್ಲೂ ಬರೆದಿರುವುದನ್ನೆಲ್ಲ ನಂಬುತ್ತೇನೆ.</verse>
				<verse number="15">ಮಾನವರು ಸಜ್ಜನರಾಗಿರಲಿ, ದುರ್ಜನರಾಗಿರಲಿ, ಪುನರುತ್ಥಾನ ಹೊಂದುವರೆಂದು ಇವರಂತೆಯೇ ನಾನು ದೇವರಲ್ಲಿ ನಂಬಿಕೆಯುಳ್ಳವನಾಗಿದ್ದೇನೆ.</verse>
				<verse number="16">ಅಂತೆಯೇ, ದೇವರ ಹಾಗೂ ಮಾನವರ ಮುಂದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ಬಾಳಲು ಪ್ರಯತ್ನಿಸುತ್ತಿದ್ದೇನೆ.</verse>
				<verse number="17">ಹಲವಾರು ವರ್ಷಗಳಿಂದ ದೂರವಿದ್ದ ನಾನು, ಈಗ ನನ್ನ ಸ್ವದೇಶಿಯರಿಗೆ ದಾನಧರ್ಮ ತರಲೂ ಕಾಣಿಕೆಯನ್ನು ಅರ್ಪಿಸಲೂ ಜೆರುಸಲೇಮಿಗೆ ಬಂದೆ.</verse>
				<verse number="18">ಶುದ್ಧಾಚಾರದ ವಿಧಿಯನ್ನು ಮುಗಿಸಿಕೊಂಡು, ನನ್ನೀ ಕಾರ್ಯದಲ್ಲಿ ನಿರತನಾಗಿದ್ದಾಗ ಇವರು ನನ್ನನ್ನು ಮಹಾದೇವಾಲಯದಲ್ಲಿ ಕಂಡರು. ಆಗ ನನ್ನೊಂದಿಗೆ ಜನರ ಗುಂಪೇನೂ ಇರಲಿಲ್ಲ; ಯಾವ ಗಲಭೆಗೂ ಅವಕಾಶವಿರಲಿಲ್ಲ.</verse>
				<verse number="19">ಆದರೆ, ಏಷ್ಯಾದಿಂದ ಬಂದಿದ್ದ ಯೆಹೂದ್ಯರು ಕೆಲವರು ಅಲ್ಲಿದ್ದರು. ನನ್ನ ಮೇಲೆ ಯಾವುದಾದರೂ ಆಪಾದನೆಯನ್ನು ಹೊರಿಸಬೇಕೆಂದಿದ್ದರೆ, ಅವರೇ ಇಲ್ಲಿ ತಮ್ಮ ಮುಂದೆ ಹಾಜರಿರಬೇಕಾಗಿತ್ತು.</verse>
				<verse number="20">ಅಥವಾ, ನಾನು ನ್ಯಾಯಸಭೆಯ ಮುಂದೆ ನಿಂತಿದ್ದಾಗ ನನ್ನಲ್ಲಿ ಯಾವ ಅಪರಾಧಗಳು ಕಂಡುಬಂದವೆಂದು, ಈ ಜನರೇ ಹೇಳಲಿ.</verse>
				<verse number="21">‘ಸತ್ತವರು ಪುನರುತ್ಥಾನ ಹೊಂದುತ್ತಾರೆ, ಎಂಬ ವಿಷಯಕ್ಕಾಗಿ ನಾನು ಇಂದು ನಿಮ್ಮ ಮುಂದೆ ವಿಚಾರಣೆಗೆ ಗುರಿಯಾಗಿದ್ದೇನೆ’ ಎಂದು ನಾನು ಆ ಸಭೆಯ ಮುಂದೆ ಕೂಗಿ ಹೇಳಿದ್ದನ್ನು ಬಿಟ್ಟರೆ, ಬೇರೆ ಏನನ್ನು ನನ್ನಲ್ಲಿ ಕಂಡರೆಂದು ಇವರೇ ಹೇಳಲಿ,” ಎಂದನು.</verse>
				<verse number="22">ಕ್ರಿಸ್ತಮಾರ್ಗದ ಬಗ್ಗೆ ಚೆನ್ನಾಗಿ ಅರಿತುಕೊಂಡಿದ್ದ ಫೆಲಿಕ್ಸನು, “ಸಹಾಸ್ರಾಧಿಪತಿ ಲೂಸಿಯನು ಬಂದ ಮೇಲೆ ನಾನು ಈ ವ್ಯಾಜ್ಯವನ್ನು ತೀರ್ಮಾನಿಸುತ್ತೇನೆ,” ಎಂದು ಹೇಳಿ ವಿಚಾರಣೆಯನ್ನು ಮುಂದೂಡಿದನು.</verse>
				<verse number="23">ಅನಂತರ ಪೌಲನನ್ನು ಕಾವಲಿನಲ್ಲಿ ಇಡಬೇಕೆಂದೂ ಆದರೆ ಕಟ್ಟುನಿಟ್ಟು ಬೇಕಿಲ್ಲವೆಂದೂ ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು ತಡೆಯಬಾರದೆಂದೂ ಶತಾಧಿಪತಿಗೆ ಆಜ್ಞೆಮಾಡಿದನು.</verse>
				<verse number="24">ಕೆಲವು ದಿನಗಳ ನಂತರ ಫೆಲಿಕ್ಸನು ಯೆಹೂದ್ಯಳಾದ ತನ್ನ ಪತ್ನಿ ದ್ರುಸಿಲ್ಲಳೊಂದಿಗೆ ಬಂದು ಪೌಲನನ್ನು ತನ್ನ ಬಳಿಗೆ ಕರೆಯಿಸಿದನು. ಕ್ರಿಸ್ತಯೇಸುವನ್ನು ವಿಶ್ವಾಸಿಸುವ ಬಗ್ಗೆ ಪೌಲನಾಡಿದ ಮಾತುಗಳನ್ನು ಆಲೈಸಿದನು.</verse>
				<verse number="25">ಆದರೆ ನೀತಿನಿಯಮ, ಇಂದ್ರಿಯನಿಗ್ರಹ, ಬರಲಿರುವ ದೈವತೀರ್ಪಿನ ದಿನ ಇವುಗಳನ್ನು ಪ್ರಸ್ತಾಪಿಸಿದಾಗ ಫೆಲಿಕ್ಸನು ದಿಗಿಲುಗೊಂಡನು. “ಸದ್ಯಕ್ಕೆ, ನೀನು ಹೋಗಬಹುದು; ಸಮಯ ಒದಗಿದಾಗ ನಿನ್ನನ್ನು ಕರೆಯಿಸುತ್ತೇನೆ,” ಎಂದನು</verse>
				<verse number="26">ಇದಲ್ಲದೆ, ಪೌಲನು ತನಗೆ ಹಣವನ್ನು ಕೊಡಬಹುದೆಂಬ ನಿರೀಕ್ಷೆ ಅವನದಾಗಿತ್ತು. ಈ ಕಾರಣದಿಂದಲೇ ಅವನನ್ನು ಪದೇ ಪದೇ ಕರೆಯಿಸಿ, ಅವನೊಡನೆ ಮಾತುಕತೆ ನಡೆಸುತ್ತಿದ್ದನು.</verse>
				<verse number="27">ಹೀಗೆ ಎರಡು ವರ್ಷಗಳು ಕಳೆದವು. ಪೊರ್ಸಿಯ ಫೆಸ್ತ ಎಂಬವನು ಫೆಲಿಕ್ಸನ ಸ್ಥಾನದಲ್ಲಿ ರಾಜ್ಯಪಾಲನಾಗಿ ಬಂದನು. ಫೆಲಿಕ್ಸನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಿಕೊಳ್ಳುವ ಸಲುವಾಗಿ ಪೌಲನನ್ನು ಸೆರೆಮನೆಯಲ್ಲೇ ಬಿಟ್ಟುಹೋದನು.</verse>
			</chapter>
			<chapter number="25">
				<verse number="1">ಫೆಸ್ತನು ಅಧಿಕಾರ ವಹಿಸಿಕೊಂಡು ಮೂರು ದಿನಗಳಾದನಂತರ ಸೆಜರೇಯದಿಂದ ಜೆರುಸಲೇಮಿಗೆ ಹೋದನು.</verse>
				<verse number="2">ಅಲ್ಲಿ ಮುಖ್ಯಯಾಜಕರು ಮತ್ತು ಯೆಹೂದ್ಯರ ಮುಖಂಡರು ಪೌಲನ ವಿರುದ್ಧ ಅವನಿಗೆ ದೂರಿತ್ತರು.</verse>
				<verse number="3">ಅವರು ಫೆಸ್ತನನ್ನು ವಿನಂತಿಸಿ, ಪೌಲನನ್ನು ಜೆರುಸಲೇಮಿಗೆ ಕರೆತರಿಸುವ ಉಪಕಾರವನ್ನು ಮಾಡಬೇಕೆಂದು ಕೇಳಿಕೊಂಡರು. ಏಕೆಂದರೆ, ಮಾರ್ಗದಲ್ಲೇ ಪೌಲನನ್ನು ಕೊಲ್ಲುವ ಸಂಚನ್ನು ಹೂಡಿದ್ದರು.</verse>
				<verse number="4">ಫೆಸ್ತನು ಅವರಿಗೆ, “ಪೌಲನು ಸೆಜರೇಯದಲ್ಲಿ ಕೈದಿಯಾಗಿದ್ದಾನೆ. ನಾನು ಬೇಗನೆ ಅಲ್ಲಿಗೆ ಹಿಂದಿರುಗಲಿದ್ದೇನೆ.</verse>
				<verse number="5">ಅವನಲ್ಲಿ ಏನಾದರೂ ತಪ್ಪಿದ್ದರೆ ನಿಮ್ಮ ಪ್ರಮುಖರು ನನ್ನ ಜೊತೆಯಲ್ಲೇ ಅಲ್ಲಿಗೆ ಬಂದು ಆಪಾದಿಸಲಿ,” ಎಂದು ಹೇಳಿದನು.</verse>
				<verse number="6">ಫೆಸ್ತನು ಅವರೊಂದಿಗೆ ಎಂಟು-ಹತ್ತು ದಿನಗಳನ್ನು ಕಳೆದು, ಸೆಜರೇಯಕ್ಕೆ ಮರಳಿ ಬಂದನು. ಮಾರನೆಯ ದಿನ ಅವನು ನ್ಯಾಯಸ್ಥಾನದಲ್ಲಿ ಕುಳಿತು ಪೌಲನನ್ನು ತನ್ನ ಮುಂದೆ ಕರೆದುತರಬೇಕೆಂದು ಆಜ್ಞಾಪಿಸಿದನು.</verse>
				<verse number="7">ಪೌಲನು ಅಲ್ಲಿಗೆ ಬಂದಾಗ, ಜೆರುಸಲೇಮಿನಿಂದ ಆಗಮಿಸಿದ್ದ ಯೆಹೂದ್ಯರು ಅವನ ಸುತ್ತಲೂ ನಿಂತು ಅವನ ವಿರುದ್ಧ ಹಲವಾರು ತೀವ್ರ ಆಪಾದನೆಗಳನ್ನು ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಂದಾಗಲಿಲ್ಲ.</verse>
				<verse number="8">ಪೌಲನು ತನ್ನ ಪರವಾಗಿ ತಾನೇ ವಾದಿಸುತ್ತಾ, “ನಾನು ಯೆಹೂದ್ಯರ ಧರ್ಮಶಾಸ್ತ್ರಕ್ಕೆ ವಿರುದ್ಧವಾಗಲಿ, ಮಹಾದೇವಾಲಯಕ್ಕೆ ವಿರುದ್ಧವಾಗಲಿ, ಅಥವಾ ಚಕ್ರವರ್ತಿಗೆ ವಿರುದ್ಧವಾಗಲಿ, ಏನನ್ನೂ ಮಾಡಿಲ್ಲ,” ಎಂದನು.</verse>
				<verse number="9">ಫೆಸ್ತನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಿಕೊಳ್ಳುವಸಲುವಾಗಿ ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಿ, ಅಲ್ಲಿ ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಣೆಗೆ ಒಳಗಾಗಲು ಇಷ್ಟಪಡುತ್ತೀಯಾ?” ಎಂದು ಕೇಳಿದನು.</verse>
				<verse number="10">ಅದಕ್ಕೆ ಪೌಲನು, “ನಾನು ಚಕ್ರವರ್ತಿಯ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ. ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ತಮಗೆ ಚೆನ್ನಾಗಿ ತಿಳಿದಿರುವಂತೆ ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಿಲ್ಲ.</verse>
				<verse number="11">ಹಾಗೇನಾದರೂ ಮಾಡಿ, ಮರಣದಂಡನೆಗೆ ಅರ್ಹನಾಗಿದ್ದರೆ, ಅದಕ್ಕೆ ಗುರಿಯಾಗಲು ಹಿಂಜರಿಯುವುದಿಲ್ಲ. ಆದರೆ ಅವರು ನನ್ನ ವಿರುದ್ಧ ತಂದಿರುವ ಆಪಾದನೆಗಳು ಜೊಳ್ಳಾಗಿದ್ದ ಪಕ್ಷದಲ್ಲಿ, ಯಾರೂ ನನ್ನನ್ನು ಇವರ ಕೈಗೊಪ್ಪಿಸಲಾಗದು. ನಾನು ಚಕ್ರವರ್ತಿಗೇ ಅಪೀಲುಮಾಡಿಕೊಳ್ಳುತ್ತೇನೆ,” ಎಂದನು.</verse>
				<verse number="12">ಆಗ ಫೆಸ್ತನು ತನ್ನ ಸಲಹೆಗಾರರೊಡನೆ ಸಮಾಲೋಚಿಸಿ, “ನೀನು ಅಪೀಲು ಮಾಡಿರುವುದು ಚಕ್ರವರ್ತಿಗೇ ಅಲ್ಲವೆ? ಚಕ್ರವರ್ತಿಯ ಬಳಿಗೇ ಹೋಗು,” ಎಂದು ಉತ್ತರಿಸಿದನು.</verse>
				<verse number="13">ಕೆಲವು ದಿನಗಳಾದ ನಂತರ ರಾಜ ಅಗ್ರಿಪ್ಪನು ಬೆರ್ನಿಸಳೊಂದಿಗೆ ಫೆಸ್ತನನ್ನು ಅಭಿನಂದಿಸಲು ಸೆಜರೇಯಕ್ಕೆ ಬಂದನು.</verse>
				<verse number="14">ಅವರು ಹಲವು ದಿನಗಳವರೆಗೆ ಅಲ್ಲೇ ತಂಗಿದ್ದರು. ಫೆಸ್ತನು ಪೌಲನ ವಿಷಯವನ್ನು ಅವನ ಮುಂದೆ ಪ್ರಸ್ತಾಪಿಸುತ್ತಾ, “ಫೆಲಿಕ್ಸನು ಕೈದಿಯಾಗಿ ಬಿಟ್ಟುಹೋದ ಒಬ್ಬ ವ್ಯಕ್ತಿ ಇಲ್ಲಿದ್ದಾನೆ.</verse>
				<verse number="15">ನಾನು ಜೆರುಸಲೇಮಿಗೆ ಹೋಗಿದ್ದಾಗ ಯೆಹೂದ್ಯರ ಮುಖ್ಯಯಾಜಕರೂ ಪ್ರಮುಖರೂ ಅವನ ವಿರುದ್ಧ ಆಪಾದನೆಗಳನ್ನು ತಂದರು. ಅವನಿಗೆ ದಂಡನೆ ವಿಧಿಸುವಂತೆ ಕೇಳಿಕೊಂಡರು.</verse>
				<verse number="16">ನಾನು ಅವರಿಗೆ, ‘ಆಪಾದಿತನೂ ಆಪಾದಿಸುವವರೂ ಮುಖಾಮುಖಿಯಾಗಿ ನಿಲ್ಲಬೇಕು; ತನ್ನ ಮೇಲೆ ಹೊರಿಸಲಾದ ಆಪಾದನೆಗಳ ವಿರುದ್ಧ ವಾದಿಸಲು ಆಪಾದಿತನಿಗೆ ಅವಕಾಶ ಕೊಡಬೇಕು. ಹಾಗೆ ಮಾಡದೆ ಅವರ ಕೈಗೊಪ್ಪಿಸುವುದು ರೋಮನರ ಪದ್ಧತಿಯಲ್ಲ,’ ಎಂದು ಹೇಳಿದೆ.</verse>
				<verse number="17">ಆದುದರಿಂದ ಅವರು ನನ್ನೊಡನೆ ಇಲ್ಲಿಗೆ ಬಂದರು. ನಾನು ತಡಮಾಡದೆ ಮರುದಿನವೇ ನ್ಯಾಯಸ್ಥಾನದಲ್ಲಿ ಕುಳಿತು ಅವನನ್ನು ನನ್ನ ಮುಂದೆ ತರುವಂತೆ ಆಜ್ಞೆಮಾಡಿದೆ.</verse>
				<verse number="18">ಆಪಾದಿಸಿದವರು ಅವನ ವಿರುದ್ಧ ಎದ್ದುನಿಂತು ಮಾತನಾಡಿದಾಗ ನಾನು ಭಾವಿಸಿದಂತಹ ಅಪರಾಧವೊಂದನ್ನೂ ಅವನ ಮೇಲೆ ಹೊರಿಸಲಿಲ್ಲ.</verse>
				<verse number="19">ಅವನೊಡನೆ ಅವರಿಗಿದ್ದ ವಾದವಿವಾದ ಅವರ ಧರ್ಮಾಚರಣೆಗಳಿಗೆ ಸಂಬಂಧಪಟ್ಟಿತ್ತು. ಯೇಸು ಎಂಬ ಒಬ್ಬ ವ್ಯಕ್ತಿಯನ್ನು ಕುರಿತೂ ವಿವಾದ ಇತ್ತು. ಯೇಸು ಸತ್ತಿದ್ದರೂ ಜೀವಂತನಾಗಿದ್ದಾನೆಂದು ಪೌಲನು ಸಾಧಿಸುತ್ತಿದ್ದನು.</verse>
				<verse number="20">ಈ ವಿಷಯಗಳ ಬಗ್ಗೆ ಹೇಗೆ ವಿಚಾರಣೆಮಾಡುವುದೆಂದು ನನಗೆ ತೋಚಲಿಲ್ಲ. ಆದುದರಿಂದ, ‘ನೀನು ಜೆರುಸಲೇಮಿಗೆ ಹೋಗಿ, ಅಲ್ಲಿ ಈ ವಿಷಯಗಳ ಬಗ್ಗೆ ವಿಚಾರಣೆಗೆ ಒಳಗಾಗಲು ಇಷ್ಟಪಡುತ್ತೀಯಾ?’ ಎಂದು ಪೌಲನನ್ನು ಕೇಳಿದೆ. ಅದಕ್ಕೆ ಅವನು, ‘ಚಕ್ರವರ್ತಿಯೇ ನನ್ನ ವಾದವನ್ನು ತೀರ್ಮಾನಿಸಲಿ. ಅಲ್ಲಿಯವರೆಗೆ ನನಗೆ ರಕ್ಷಣೆ ಬೇಕು,’ ಎಂದು ವಿನಂತಿಸಿದ.</verse>
				<verse number="21">ಅಂತೆಯೇ ಅವನನ್ನು ಚಕ್ರವರ್ತಿಯ ಬಳಿಗೆ ಕಳುಹಿಸಲಾಗುವ ತನಕ ಕಾವಲಿನಲ್ಲಿ ಇಡಬೇಕೆಂದು ಆಜ್ಞೆಮಾಡಿದೆ,” ಎಂದನು.</verse>
				<verse number="22">ಆಗ ಅಗ್ರಿಪ್ಪನು ಫೆಸ್ತನಿಗೆ, “ಆ ಮನುಷ್ಯ ಹೇಳುವುದನ್ನು ನಾನು ಖುದ್ದಾಗಿ ಕೇಳಲಾಶಿಸುತ್ತೇನೆ,” ಎಂದನು. “ನಾಳೆಯೇ ಅದಕ್ಕೆ ವ್ಯವಸ್ಥೆ ಮಾಡುತ್ತೇನೆ,” ಎಂದು ಉತ್ತರವಿತ್ತನು ಫೆಸ್ತ.</verse>
				<verse number="23">ಮಾರನೆಯ ದಿನ ಅಗ್ರಿಪ್ಪ ಮತ್ತು ಬೆರ್ನಿಸ್ ಮಹಾಸಡಗರದಿಂದ ಆಗಮಿಸಿದರು. ಸೇನಾಧಿಪತಿಗಳ ಹಾಗೂ ಪುರಪ್ರಮುಖರ ಸಮೇತ ಆಸ್ಥಾನವನ್ನು ಪ್ರವೇಶಿಸಿದರು. ಫೆಸ್ತನ ಆಜ್ಞೆಯ ಪ್ರಕಾರ ಪೌಲನನ್ನು ಹಾಜರುಪಡಿಸಲಾಯಿತು.</verse>
				<verse number="24">ಆಗ ಫೆಸ್ತನು, “ಅಗ್ರಿಪ್ಪರಾಜರೇ, ಇಲ್ಲಿ ನೆರೆದಿರುವ ಮಹಾಜನರೇ, ನೀವು ನೋಡುತ್ತಿರುವ ಈ ವ್ಯಕ್ತಿಯ ವಿರುದ್ಧ ಇಲ್ಲಿಯೂ ಜೆರುಸಲೇಮಿನಲ್ಲಿಯೂ ಯೆಹೂದ್ಯರೆಲ್ಲರೂ ನನ್ನಲ್ಲಿ ಮನವಿಮಾಡಿಕೊಂಡಿದ್ದಾರೆ. ಇವನನ್ನು ಜೀವಸಹಿತ ಬಿಡಬಾರದೆಂದು ಕೂಗಾಡುತ್ತಿದ್ದಾರೆ.</verse>
				<verse number="25">ಇವನಿಗೆ ಮರಣದಂಡನೆ ವಿಧಿಸುವಂಥ ಅಪರಾಧವೇನೂ ನನಗೆ ಕಂಡುಬರಲಿಲ್ಲ. ಅಲ್ಲದೆ ಇವನು ಚಕ್ರವರ್ತಿಗೇ ಅಪೀಲುಮಾಡಿಕೊಂಡಿದ್ದಾನೆ. ಆದ್ದರಿಂದ ನಾನು ಇವನನ್ನು ಅವರಲ್ಲಿಗೆ ಕಳುಹಿಸಲು ನಿರ್ಧರಿಸಿದ್ದೇನೆ.</verse>
				<verse number="26">ಆದರೆ ಇವನ ಬಗ್ಗೆ ಮಹಾಸನ್ನಿಧಿಗೆ ಬರೆಯಲು ನಿರ್ದಿಷ್ಟವಾದುದೇನೂ ನನಗೆ ತೋಚುವುದಿಲ್ಲ. ಒಂದು ವಿಚಾರಣೆ ನಡೆಸಿದರೆ, ಅವರಿಗೆ ಬರೆಯಲು ಏನಾದರೂ ದೊರಕಬಹುದೆಂದು ತಿಳಿದು ಇವನನ್ನು ನಿಮ್ಮ ಮುಂದೆ, ಮುಖ್ಯವಾಗಿ ಅಗ್ರಿಪ್ಪ ರಾಜರೇ, ತಮ್ಮ ಮುಂದೆ, ಹಾಜರುಪಡಿಸಿರುತ್ತೇನೆ.</verse>
				<verse number="27">ಏಕೆಂದರೆ, ಒಬ್ಬ ಕೈದಿಯ ವಿರುದ್ಧ ಇರುವ ಆಪಾದನೆಗಳನ್ನು ಸ್ಪಷ್ಟವಾಗಿ ಸೂಚಿಸದೆ ಅವನನ್ನು ಕಳುಹಿಸುವುದು ಸರಿಯಲ್ಲವೆಂದು ನನಗೆ ಅನಿಸುತ್ತದೆ,” ಎಂದನು.</verse>
			</chapter>
			<chapter number="26">
				<verse number="1">ಅಗ್ರಿಪ್ಪನು ಪೌಲನಿಗೆ ಮಾತನಾಡಲು ಅಪ್ಪಣೆಕೊಡುತ್ತಾ, “ಈಗ ನಿನ್ನ ಪರವಾಗಿ ನೀನು ಮಾತನಾಡಬಹುದು,” ಎಂದನು. ಪೌಲನು ಕೈಯೆತ್ತಿ ಹೀಗೆ ವಾದಿಸತೊಡಗಿದನು:</verse>
				<verse number="2">“ಅಗ್ರಿಪ್ಪ ರಾಜರೇ, ಯೆಹೂದ್ಯರು ನನ್ನ ಮೇಲೆ ಹೊರಿಸಿರುವ ಎಲ್ಲಾ ಆಪಾದನೆಗಳಿಗೆ ಇಂದು ತಮ್ಮ ಮುಂದೆ ಪ್ರತಿವಾದಮಾಡುವ ಅವಕಾಶ ದೊರೆತಿರುವುದು ನನ್ನ ಸೌಭಾಗ್ಯವೆಂದೇ ಎಣಿಸುತ್ತೇನೆ.</verse>
				<verse number="3">ಏಕೆಂದರೆ, ತಾವು ಯೆಹೂದ್ಯರ ಆಚಾರವಿಚಾರಗಳನ್ನೂ ವಾದವಿವಾದಗಳನ್ನೂ ಚೆನ್ನಾಗಿ ಬಲ್ಲಿರಿ. ಆದುದರಿಂದ ನನ್ನ ಮಾತನ್ನು ತಾಳ್ಮೆಯಿಂದ ಆಲಿಸಬೇಕೆಂದು ವಿನಂತಿಸುತ್ತೇನೆ:</verse>
				<verse number="4">ನಾನು ಚಿಕ್ಕಂದಿನಿಂದ ಯಾವ ರೀತಿ ಜೆರುಸಲೇಮಿನಲ್ಲಿಯೇ ನನ್ನ ದೇಶೀಯರೊಡನೆ ಜೀವಿಸಿದೆಯೆಂಬುದು ಎಲ್ಲ ಯೆಹೂದ್ಯರಿಗೆ ತಿಳಿದ ವಿಷಯ.</verse>
				<verse number="5">ನಮ್ಮ ಧರ್ಮದ ಅತಿ ಕಟ್ಟುನಿಟ್ಟಾದ ಪಂಥವೆಂದರೆ ಫರಿಸಾಯಪಂಥ. ಅದರ ಅನುಯಾಯಿ ಆಗಿದ್ದೆ ನಾನು. ಇದನ್ನು ಮೊದಲಿನಿಂದ ಅರಿತಿರುವ ಅವರೇ ಮನಸ್ಸುಮಾಡಿದರೆ ಸಾಕ್ಷಿಹೇಳಬಲ್ಲರು.</verse>
				<verse number="6">ನಮ್ಮ ಪೂರ್ವಜರಿಗೆ ದೇವರು ಮಾಡಿದ ವಾಗ್ದಾನದಲ್ಲಿ ನಂಬಿಕೆಯಿಟ್ಟುದಕ್ಕಾಗಿಯೇ ನಾನು ಇಂದು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ.</verse>
				<verse number="7">ಹನ್ನೆರಡು ಗೋತ್ರಗಳ ನಮ್ಮ ಜನರು, ಹಗಲಿರುಳು ದೇವರನ್ನು ಆರಾಧಿಸುತ್ತಾ, ಆ ವಾಗ್ದಾನ ಈಡೇರಿಯೇ ತೀರುವುದೆಂದು ನಂಬಿದ್ದಾರೆ. ಈ ನಂಬಿಕೆಗಾಗಿಯೇ, ಓ ರಾಜರೇ, ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆ ಮಾಡಿದ್ದಾರೆ.</verse>
				<verse number="8">ಸತ್ತವರನ್ನು ದೇವರು ಪುನರುತ್ಥಾನಗೊಳಿಸುತ್ತಾರೆಂಬುದನ್ನು ನಂಬಲು ಅಸಾಧ್ಯವೆಂದು ಇಲ್ಲಿರುವ ನೀವು ತಾನೇ ಭಾವಿಸುವುದೇಕೆ?</verse>
				<verse number="9">“ನನ್ನ ವಿಷಯದಲ್ಲಿ ಹೇಳುವುದಾದರೆ, ಒಮ್ಮೆ ನಾನು ಯೇಸುವಿನ ನಾಮವನ್ನೇ ನಿರ್ಮೂಲಮಾಡಬೇಕೆಂದಿದ್ದೆ; ಅದಕ್ಕೆ ಅಗತ್ಯವಾದುದನ್ನೆಲ್ಲ ಮಾಡುವುದು ನನ್ನ ಕರ್ತವ್ಯ ಎಂದು ಎಣಿಸಿದ್ದೆ.</verse>
				<verse number="10">ಅಂತೆಯೇ ಜೆರುಸಲೇಮಿನಲ್ಲೇ ಈ ಕಾರ್ಯವನ್ನು ಆರಂಭಿಸಿದೆ. ಮುಖ್ಯ ಯಾಜಕರಿಂದ ಅಧಿಕಾರ ಪಡೆದು ದೇವಜನರಲ್ಲಿ ಅನೇಕರನ್ನು ನಾನು ಸೆರೆಮನೆಗೆ ತಳ್ಳಿದೆ. ಅವರಿಗೆ ಮರಣದಂಡನೆ ವಿಧಿಸಿದಾಗ ನಾನೂ ಅದನ್ನು ಅನುಮೋದಿಸಿದೆ.</verse>
				<verse number="11">ಅನೇಕ ಬಾರಿ ನಾನು ಅವರನ್ನು ಪ್ರಾರ್ಥನಾಮಂದಿರಗಳಲ್ಲೆಲ್ಲಾ ಬಾಧೆಪಡಿಸಿದೆ. ಹೀಗೆ, ವಿಶ್ವಾಸಭ್ರಷ್ಟರಾಗುವಂತೆ ಬಲಾತ್ಕರಿಸಿದೆ. ನನ್ನ ಕೋಪೋದ್ರೇಕಕ್ಕೆ ಎಲ್ಲೆ ಇರಲಿಲ್ಲ. ಹೊರನಾಡಿನ ಊರುಗಳಿಗೂ ಅವರನ್ನು ಬೆನ್ನಟ್ಟಿಹೋಗಿ ಹಿಂಸೆಪಡಿಸಿದೆ.</verse>
				<verse number="12">“ಈ ಉದ್ದೇಶದಿಂದಲೇ ಒಮ್ಮೆ ಮುಖ್ಯಯಾಜಕರಿಂದ ಅಧಿಕಾರವನ್ನು ಹಾಗೂ ಆಯೋಗವನ್ನು ಪಡೆದು, ದಮಸ್ಕಸಿಗೆ ಹೊರಟೆ.</verse>
				<verse number="13">ದಾರಿಯಲ್ಲಿ, ನಡು ಮಧ್ಯಾಹ್ನದ ವೇಳೆಯಲ್ಲಿ, ಓ ರಾಜರೇ, ಸೂರ್ಯನಿಗಿಂತಲೂ ಪ್ರಕಾಶಮಾನವಾದ ಬೆಳಕೊಂದು ಆಕಾಶದಿಂದ ಹೊಳೆಯುವುದನ್ನು ಕಂಡೆ. ಅದು ನನ್ನ ಮತ್ತು ಸಹಪ್ರಯಾಣಿಕರ ಸುತ್ತಲೂ ಆವರಿಸಿತು.</verse>
				<verse number="14">ನಾವೆಲ್ಲರೂ ನೆಲಕ್ಕೆ ಉರುಳಿದೆವು. ಆಗ, ‘ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ? ಮುಳ್ಳುಗೋಲಿನ ಮೊನೆಯನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ?’ ಎಂಬ ವಾಣಿ ಹಿಬ್ರು ಭಾಷೆಯಲ್ಲಿ ನನಗೆ ಕೇಳಿಸಿತು.</verse>
				<verse number="15">‘ಪ್ರಭೂ ನೀವಾರು?’ ಎಂದು ನಾನು ಕೇಳಿದೆ. ಅದಕ್ಕೆ ಪ್ರಭು, ‘ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು.</verse>
				<verse number="16">ಎದ್ದು ನಿಂತುಕೋ; ನಿನ್ನನ್ನು ನನ್ನ ದಾಸನನ್ನಾಗಿಯೂ ಸಾಕ್ಷಿಯನ್ನಾಗಿಯೂ ನೇಮಿಸಿಕೊಳ್ಳುವುದಕ್ಕಾಗಿ ನಿನಗೆ ದರ್ಶನವಿತ್ತಿದ್ದೇನೆ. ಈ ದರ್ಶನದಲ್ಲಿ ನನ್ನ ವಿಷಯವಾಗಿ ಕಂಡದ್ದನ್ನು ಮತ್ತು ಮುಂದಿನ ದರ್ಶನಗಳಲ್ಲಿ ನಾನು ನಿನಗೆ ತೋರಿಸಲಿರುವ ವಿಷಯಗಳನ್ನು ಕುರಿತು ಬೇರೆಯವರಿಗೆ ನೀನು ತಿಳಿಸಬೇಕು.</verse>
				<verse number="17">ಯೆಹೂದ್ಯರಿಂದಲೂ ಅನ್ಯಜನರಿಂದಲೂ ನಾನು ನಿನ್ನನ್ನು ಕಾಪಾಡುತ್ತೇನೆ. ಇವರ ಬಳಿಗೇ ನಾನು ನಿನ್ನನ್ನು ಕಳುಹಿಸುತ್ತಿದ್ದೇನೆ.</verse>
				<verse number="18">ನೀನು ಇವರ ಕಣ್ಣುಗಳನ್ನು ತೆರೆಯಬೇಕು; ಅಂಧಕಾರವನ್ನು ಬಿಟ್ಟು ಬೆಳಕಿಗೆ ಬರುವಂತೆ ಮಾಡಬೇಕು; ಸೈತಾನನ ಆಧಿಪತ್ಯವನ್ನು ತ್ಯಜಿಸಿ ದೇವರತ್ತ ತಿರುಗುವಂತೆ ಮಾಡಬೇಕು. ಹೀಗೆ, ಅವರು ನನ್ನಲ್ಲಿಡುವ ವಿಶ್ವಾಸದ ಪ್ರಯುಕ್ತ ಪಾಪವಿಮೋಚನೆಯನ್ನು ಪಡೆಯುವರು; ಆಯ್ಕೆಯಾದವರಿಗಿರುವ ಹಕ್ಕುಬಾಧ್ಯತೆಗಳಲ್ಲಿ ಭಾಗಿಗಳಾಗುವರು,’ ಎಂದು ಹೇಳಿದರು.</verse>
				<verse number="19">“ಇಂತಿರಲು, ಅಗ್ರಿಪ್ಪ ರಾಜರೇ, ನನಗೆ ಲಭಿಸಿದ ಈ ಸ್ವರ್ಗೀಯ ದರ್ಶನಕ್ಕೆ ಅವಿಧೇಯನಾಗಿ ನಡೆಯಲು ನನ್ನಿಂದಾಗಲಿಲ್ಲ.</verse>
				<verse number="20">ದಮಸ್ಕಸ್ ಮೊದಲ್ಗೊಂಡು ಜೆರುಸಲೇಮಿಗೂ ಮತ್ತು ಎಲ್ಲ ಜುದೇಯ ನಾಡಿಗೂ ಹಾಗೂ ಅನ್ಯಧರ್ಮೀಯರಲ್ಲಿಗೂ ಹೋಗಿ, ಜನರು ತಮ್ಮತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೈವಾಭಿಮುಖಿಗಳಾಗಬೇಕೆಂದು ಬೋಧಿಸಿದೆ; ಪಶ್ಚಾತ್ತಾಪ ಸೂಚಕಕಾರ್ಯಗಳನ್ನು ಕೈಗೊಳ್ಳುವಂತೆ ಘೋಷಿಸಿದೆ.</verse>
				<verse number="21">ಇದಕ್ಕಾಗಿಯೇ ಯೆಹೂದ್ಯರು ನನ್ನನ್ನು ಮಹಾದೇವಾಲಯದಲ್ಲಿ ಹಿಡಿದು ಕೊಲ್ಲಲು ಪ್ರಯತ್ನಿಸಿದರು.</verse>
				<verse number="22">ಆದರೆ, ಇಂದಿನವರೆಗೂ ದೇವರು ನನಗೆ ನೆರವಾಗುತ್ತಾ ಬಂದಿದ್ದಾರೆ. ಎಂದೇ ದೊಡ್ಡವರು ಚಿಕ್ಕವರೆನ್ನದೆ, ಎಲ್ಲರಿಗೂ ಕ್ರಿಸ್ತಯೇಸುವಿನ ಪರವಾಗಿ ಸಾಕ್ಷಿನೀಡುತ್ತಾ ನಿಮ್ಮ ಮುಂದೆ ನಿಂತಿರುತ್ತೇನೆ. ನಾನು ಹೇಳುತ್ತಿರುವುದು, ಪ್ರವಾದಿಗಳು ಮತ್ತು ಮೋಶೆಯು ಮುಂದೆ ಏನು ಸಂಭವಿಸುವುದೆಂದು ಹೇಳಿದ್ದರೋ, ಅದನ್ನೇ ಹೊರತು ಮತ್ತೇನನ್ನೂ ನಾನು ಹೇಳುತ್ತಿಲ್ಲ.</verse>
				<verse number="23">ಅದೇನೆಂದರೆ, ಲೋಕೋದ್ಧಾರಕನು ಯಾತನೆಯನ್ನು ಅನುಭವಿಸಬೇಕು; ಸತ್ತು ಪುನರುತ್ಥಾನವಾದವರಲ್ಲಿ ಮೊತ್ತಮೊದಲಿಗನಾಗಿ ಯೆಹೂದ್ಯರಿಗೂ ಅನ್ಯಧರ್ಮೀಯರಿಗೂ ಪರಂಜ್ಯೋತಿಯನ್ನು ಪ್ರಕಟಿಸಬೇಕು,” ಎಂದನು.</verse>
				<verse number="24">ಈ ರೀತಿ ಪೌಲನು ತನ್ನ ಪರವಾಗಿ ವಾದಿಸುತ್ತಿದ್ದಾಗ ಫೆಸ್ತನು, “ಪೌಲನೇ, ನಿನಗೆ ಹುಚ್ಚು ಹಿಡಿದಿದೆ; ಅಧಿಕ ಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿಸಿದೆ,” ಎಂದು ಗಟ್ಟಿಯಾಗಿ ಕೂಗಿದನು.</verse>
				<verse number="25">ಅದಕ್ಕೆ ಪೌಲನು, “ನಾನು ಹುಚ್ಚನಲ್ಲ, ಫೆಸ್ತ ಮಹಾಪ್ರಭೂ, ನಾನು ಆಡುತ್ತಿರುವುದು ತಿಳಿಮನಸ್ಸಿನಿಂದಾಡುವ ಸತ್ಯ.</verse>
				<verse number="26">ಅಗ್ರಿಪ್ಪರಾಜರಿಗೆ ಈ ವಿಷಯಗಳು ತಿಳಿದೇ ಇವೆ. ಆದ್ದರಿಂದ ನಾನು ಅವರ ಮುಂದೆ ಧೈರ್ಯದಿಂದ ಮಾತನಾಡುತ್ತಿದ್ದೇನೆ. ನಾನು ಹೇಳಿದವುಗಳಲ್ಲಿ ಒಂದಾದರೂ ಅವರಿಗೆ ಮುಚ್ಚುಮರೆಯಾದುದಲ್ಲವೆಂದು ನಂಬಿದ್ದೇನೆ. ಏಕೆಂದರೆ, ಇದು ಯಾವುದೋ ಒಂದು ಅಜ್ಞಾತ ಮೂಲೆಯಲ್ಲಿ ನಡೆದ ಕಾರ್ಯವಲ್ಲ.</verse>
				<verse number="27">ಅಗ್ರಿಪ್ಪ ರಾಜರೇ, ತಮಗೆ ಪ್ರವಾದಿಗಳಲ್ಲಿ ನಂಬಿಕೆಯುಂಟೋ? ಉಂಟೆಂದು ನಾನು ಬಲ್ಲೆ,” ಎಂದನು.</verse>
				<verse number="28">ಅದಕ್ಕೆ ಅಗ್ರಿಪ್ಪನು, “ಇಷ್ಟು ಅಲ್ಪಕಾಲದಲ್ಲೇ ನನ್ನನ್ನು ಕ್ರೈಸ್ತನನ್ನಾಗಿ ಮಾಡಬೇಕೆಂದು ಇಚ್ಛಿಸುತ್ತೀಯಾ?’ ಎಂದನು.</verse>
				<verse number="29">ಪೌಲನು ಪ್ರತ್ಯುತ್ತರವಾಗಿ, “ಅಲ್ಪಕಾಲವಾಗಲಿ, ದೀರ್ಘಕಾಲವಾಗಲಿ, ನೀವು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಎಲ್ಲರೂ ನನ್ನಂತೆಯೇ ಆಗಬೇಕೆಂಬುದೇ ದೇವರಲ್ಲಿ ನಾನು ಮಾಡುವ ಪ್ರಾರ್ಥನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ,” ಎಂದನು.</verse>
				<verse number="30">ಅನಂತರ ರಾಜನೂ ರಾಜ್ಯಪಾಲನೂ ಬೆರ್ನಿಸಳೂ ಅವರ ಸಂಗಡ ಕುಳಿತಿದ್ದವರೆಲ್ಲರೂ ಮೇಲಕ್ಕೆದ್ದರು.</verse>
				<verse number="31">ಅಲ್ಲಿಂದ ಹೊರಕ್ಕೆ ಹೋಗಿ, “ಮರಣದಂಡನೆಗಾಗಲಿ ಅಥವಾ ಸೆರೆಮನೆವಾಸಕ್ಕಾಗಲಿ ಗುರಿಮಾಡುವಂಥ ಯಾವ ತಪ್ಪನ್ನೂ ಈ ಮನುಷ್ಯ ಮಾಡಿಲ್ಲ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.</verse>
				<verse number="32">ಅಗ್ರಿಪ್ಪನು ಫೆಸ್ತನಿಗೆ, “ಚಕ್ರವರ್ತಿಗೆ ನೇರವಾಗಿ ಇವನು ಅಪೀಲುಮಾಡಿಕೊಳ್ಳದಿದ್ದರೆ, ಇವನನ್ನು ಬಿಡುಗಡೆಮಾಡಬಹುದಾಗಿತ್ತು,” ಎಂದನು.</verse>
			</chapter>
			<chapter number="27">
				<verse number="1">ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾದಮೇಲೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ‘ಔಗುಸ್ತದಳ’ ಎಂಬ ರೋಮಿನ ದಳಕ್ಕೆ ಸೇರಿದ ಜೂಲಿಯಸ್ ಎಂಬ ಶತಾಧಿಪತಿಯ ವಶಕ್ಕೆ ಒಪ್ಪಿಸಲಾಯಿತು.</verse>
				<verse number="2">ಆಗ ಅದ್ರಮಿತಿಯದಿಂದ ಬಂದು ಏಷ್ಯಾ ಪ್ರಾಂತ್ಯದ ಬಂದರುಗಳಿಗೆ ಹೋಗಲು ಸಿದ್ಧವಾಗಿದ್ದ ಹಡಗನ್ನು ಹತ್ತಿ ನಾವು ಪ್ರಯಾಣ ಬೆಳೆಸಿದೆವು. ಥೆಸಲೋನಿಕದಿಂದ ಬಂದ ಮಕೆದೋನಿಯದ ಅರಿಸ್ತಾರ್ಕ ನಮ್ಮ ಸಂಗಡ ಇದ್ದನು.</verse>
				<verse number="3">ಮಾರನೆಯ ದಿನ ನಾವು ಸಿದೋನಿಗೆ ಆಗಮಿಸಿದೆವು. ಪೌಲನು ತನ್ನ ಗೆಳೆಯರನ್ನು ಸಂದರ್ಶಿಸುವುದಕ್ಕೂ ಅವರಿಂದ ತನಗೆ ಅಗತ್ಯವಿದ್ದುದನ್ನು ಪಡೆಯುವುದಕ್ಕೂ ಜೂಲಿಯಸನು ಆದರದಿಂದ ಅನುಮತಿಯನ್ನು ಕೊಟ್ಟನು.</verse>
				<verse number="4">ನಾವು ಅಲ್ಲಿಂದ ಹೊರಟೆವು. ಎದುರುಗಾಳಿ ಬೀಸುತ್ತಿತ್ತು. ಆದುದರಿಂದ ಸೈಪ್ರಸ್ ದ್ವೀಪದ ಮರೆಗೆ ಸಾಗಿದೆವು.</verse>
				<verse number="5">ಸಿಲಿಸಿಯಕ್ಕೂ ಪಾಂಫೀಲಿಯಕ್ಕೂ ಎದುರಾಗಿರುವ ಸಮುದ್ರವನ್ನು ದಾಟಿ ಲುಸಿಯ ಪ್ರಾಂತ್ಯದಲ್ಲಿರುವ ‘ಮುರ’ ಎಂಬ ಊರಿಗೆ ಬಂದೆವು.</verse>
				<verse number="6">ಅಲ್ಲಿ, ಅಲೆಕ್ಸಾಂಡ್ರಿಯದಿಂದ ಬಂದು ಇಟಲಿಗೆ ಹೋಗುತ್ತಿದ್ದ ಹಡಗನ್ನು ಕಂಡು ಶತಾಧಿಪತಿ ನಮ್ಮನ್ನು ಅದಕ್ಕೆ ಹತ್ತಿಸಿದನು.</verse>
				<verse number="7">ನಾವು ಅನೇಕ ದಿನಗಳವರೆಗೆ ನಿಧಾನವಾಗಿ ಪ್ರಯಾಣಮಾಡಿದೆವು. ಅತಿ ಕಷ್ಟದಿಂದ ‘ಸ್ನೀಡ’ ಎಂಬ ಊರಿಗೆ ಎದುರಾಗಿ ಬಂದೆವು. ಆ ದಿಸೆಯಲ್ಲಿ ಪ್ರಯಾಣಮಾಡಲು ಎದುರುಗಾಳಿ ನಮ್ಮನ್ನು ಬಿಡಲಿಲ್ಲ. ಆದ್ದರಿಂದ ನಾವು ಸಾಲ್ಮೋನೆ ಭೂಶಿರವನ್ನು ದಾಟಿ, ಕ್ರೇಟ್ ದ್ವೀಪದ ಮರೆಯನ್ನು ಸೇರಿದೆವು.</verse>
				<verse number="8">ಆ ದ್ವೀಪದ ಕರಾವಳಿಯಲ್ಲೇ ಪ್ರಯಾಸದಿಂದ ಸಾಗುತ್ತಾ, ಲಸಾಯ ಊರಿನ ಸಮೀಪದಲ್ಲಿರುವ ‘ಸುಗಮ ರೇವು’ ಎಂಬ ಸ್ಥಳವನ್ನು ಸೇರಿದೆವು.</verse>
				<verse number="9">ಇಷ್ಟರಲ್ಲಿ ಬಹಳ ದಿನಗಳು ಕಳೆದಿದ್ದವು. ಉಪವಾಸದ ಮಹಾದಿನವೂ ಕಳೆದಿತ್ತು. ಈ ಕಾಲದಲ್ಲಿ ಸಮುದ್ರದಲ್ಲಿ ಮುಂದುವರಿಸುವುದು ಅಪಾಯಕರವಾಗಿತ್ತು.</verse>
				<verse number="10">ಆದುದರಿಂದ ಪೌಲನು, “ಮಿತ್ರರೇ, ಇಲ್ಲಿಂದ ಮುಂದಕ್ಕೆ ಪ್ರಯಾಣ ಅಪಾಯಕರವಾಗಿರುವಂತೆ ತೋರುತ್ತದೆ. ಹಡಗು ಮತ್ತು ಅದರಲ್ಲಿರುವ ಸರಕುಸಾಮಗ್ರಿಗಳಿಗೆ ಮಾತ್ರವಲ್ಲ, ನಮ್ಮ ಪ್ರಾಣಕ್ಕೂ ಕಷ್ಟನಷ್ಟ ಸಂಭವಿಸಲಿದೆ,” ಎಂದು ಎಚ್ಚರಿಸಿದನು.</verse>
				<verse number="11">ಆದರೆ ಶತಾಧಿಪತಿ ಪೌಲನನ್ನು ನಂಬದೆ, ನೌಕೆಯ ನಾಯಕನ ಹಾಗೂ ಅದರ ಯಜಮಾನನ ಮಾತುಗಳಿಗೆ ಕಿವಿಗೊಟ್ಟನು.</verse>
				<verse number="12">ಅಲ್ಲದೆ ಚಳಿಗಾಲವನ್ನು ಕಳೆಯಲು ಆ ಬಂದರು ಹಿತಕರವಾಗಿರಲಿಲ್ಲ. ಆದ್ದರಿಂದ ಅಲ್ಲಿಂದ ಹೊರಟು, ಸಾಧ್ಯವಾದರೆ, ಫೆನಿಕ್ಸ್ ಎಂಬ ಊರನ್ನು ಸೇರಿ, ಅಲ್ಲೇ ಚಳಿಗಾಲವನ್ನು ಕಳೆಯಬಹುದೆಂದು ಹೆಚ್ಚುಮಂದಿ ಅಭಿಪ್ರಾಯ ವ್ಯಕ್ತಪಡಿಸಿದರು. ಫೆನಿಕ್ಸ್, ಕ್ರೇಟ್ ದ್ವೀಪದ ಒಂದು ಬಂದರು. ಇದು ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ.</verse>
				<verse number="13">ದಕ್ಷಿಣದಿಂದ ತೆಳುಗಾಳಿ ಬೀಸಲಾರಂಭಿಸಿತು. ಪ್ರಯಾಣಿಕರು ತಮ್ಮ ಉದ್ದೇಶ ಕೈಗೂಡಿತೆಂದು ಭಾವಿಸಿದರು. ಅವರು ಹಡಗಿನ ಲಂಗರುಗಳನ್ನು ಎತ್ತಿ, ಕ್ರೇಟ್ ದ್ವೀಪವನ್ನು ಅನುಸರಿಸುತ್ತಾ, ತೀರದ ಮಗ್ಗುಲಲ್ಲೇ ಪ್ರಯಾಣ ಹೊರಟರು.</verse>
				<verse number="14">ಆದರೆ ಸ್ವಲ್ಪದರಲ್ಲೇ ‘ಈಶಾನ್ಯ ಮಾರುತ’ ಎಂಬ ಪ್ರಚಂಡಗಾಳಿ ದ್ವೀಪದಿಂದ ಬೀಸತೊಡಗಿತು.</verse>
				<verse number="15">ಅದರ ಹೊಡೆತಕ್ಕೆ ಹಡಗು ಸಿಕ್ಕಿಕೊಂಡಿತು. ಅದಕ್ಕೆ ಎದುರಾಗಿ ಚಲಿಸಲು ಅಸಾಧ್ಯವಾಗಿ ಗಾಳಿಬೀಸಿದ ಕಡೆಯೇ ಹಡಗನ್ನು ತೇಲಬಿಟ್ಟೆವು.</verse>
				<verse number="16">ಕ್ಲೌಡ ಎಂಬ ಪುಟ್ಟ ದ್ವೀಪದ ಮರೆಯಲ್ಲಿ ಹಾದುಹೋಗುವಾಗ ಹಡಗಿನಲ್ಲಿ ಇದ್ದ ಚಿಕ್ಕ ದೋಣಿಯನ್ನು ಸುಭದ್ರಪಡಿಸಿಕೊಳ್ಳಲು ಸಾಧ್ಯವಾಯಿತು.</verse>
				<verse number="17">ಹಡಗಿನವರು ಅದನ್ನು ಮೇಲಕ್ಕೆ ಎಳೆದು ಹಗ್ಗಗಳಿಂದ ಹಡಗಿನ ಅಡಿಭಾಗಕ್ಕೆ ಬಿಗಿಯಾಗಿ ಕಟ್ಟಿದರು. ಅನಂತರ ‘ಸುರ್ತಿಸ್’ ಎಂಬ ಉಸುಬಿನಲ್ಲಿ ಹಡಗು ಎಲ್ಲಿ ಸಿಕ್ಕಿಕೊಳ್ಳುವುದೋ ಎಂಬ ಭಯ ಆವರಿಸಿತು. ಆದುದರಿಂದ ಅವರು ಹಾಯಿಯನ್ನು ಇಳಿಸಿ, ಗಾಳಿ ಬೀಸುತ್ತಿದ್ದ ಕಡೆಯೇ ಹಡಗು ತೇಲಲೆಂದು ಬಿಟ್ಟರು.</verse>
				<verse number="18">ಚಂಡಮಾರುತ ನಮ್ಮನ್ನು ಒಂದೇಸಮನೆ ಹೊಯ್ದಾಡಿಸುತ್ತಿದ್ದುದರಿಂದ ಮಾರನೆಯ ದಿನ ಸರಕುಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆಯಲು ಆರಂಭಿಸಿದರು.</verse>
				<verse number="19">ಮೂರನೆಯ ದಿನ ಅವರು ಹಡಗಿನ ಕೆಲವು ಸಲಕರಣೆಗಳನ್ನು ಸ್ವತಃ ಎತ್ತಿ ಹೊರಗೆಸೆದರು.</verse>
				<verse number="20">ಅನೇಕ ದಿನಗಳವರೆಗೆ ಸೂರ್ಯನನ್ನಾಗಲಿ ನಕ್ಷತ್ರಗಳನ್ನಾಗಲಿ ನೋಡಲಾಗಲಿಲ್ಲ. ಗಾಳಿ ತೀವ್ರವಾಗಿತ್ತು. ಕಟ್ಟಕಡೆಗೆ ನಾವು ಬದುಕುವ ಆಶೆಯನ್ನೇ ತೊರೆಯಬೇಕಾಯಿತು.</verse>
				<verse number="21">ಬಹಳ ದಿನಗಳವರೆಗೆ ಅವರು ಊಟವಿಲ್ಲದೆ ಇದ್ದರು. ಆಗ ಪೌಲನು ಎದ್ದುನಿಂತು, “ಗೆಳೆಯರೇ, ನೀವು ನನ್ನ ಮಾತನ್ನು ಕೇಳಬೇಕಿತ್ತು. ಕ್ರೇಟ್ ದ್ವೀಪದಿಂದ ಮುಂದಕ್ಕೆ ಪ್ರಯಾಣ ಮಾಡಬಾರದಿತ್ತು. ಆಗ ಇಷ್ಟೆಲ್ಲಾ ಕಷ್ಟನಷ್ಟವನ್ನು ತಡೆಯಬಹುದಿತ್ತು.</verse>
				<verse number="22">ಈಗಲಾದರೂ ಧೈರ್ಯದಿಂದಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ಹಡಗು ನಾಶವಾಗುವುದೇ ಹೊರತು, ನಿಮ್ಮಲ್ಲಿ ಯಾರಿಗೂ ಪ್ರಾಣಹಾನಿ ಆಗಲಾರದು.</verse>
				<verse number="23">ನಾನು ಯಾವ ದೇವರ ಭಕ್ತನಾಗಿದ್ದೇನೋ, ಯಾವ ದೇವರನ್ನು ಆರಾಧಿಸುತ್ತೇನೋ ಆ ದೇವರ ದೂತನು ನಿನ್ನೆ ರಾತ್ರಿ ದರ್ಶನವಿತ್ತನು:</verse>
				<verse number="24">‘ಪೌಲನೇ, ಭಯಪಡಬೇಡ. ನೀನು ಚಕ್ರವರ್ತಿಯ ಸಮ್ಮುಖದಲ್ಲಿ ನಿಲ್ಲಲೇಬೇಕಾಗಿದೆ; ಇಗೋ, ನಿನ್ನ ಸಂಗಡ ಪ್ರಯಾಣಮಾಡುವ ಎಲ್ಲರ ಪ್ರಾಣಗಳನ್ನು ದೇವರು ನಿನ್ನ ನಿಮಿತ್ತ ಉಳಿಸಿದ್ದಾರೆ,’ ಎಂದು ಅಭಯವಿತ್ತನು.</verse>
				<verse number="25">ಆದುದರಿಂದ ಗೆಳೆಯರೇ, ಧೈರ್ಯದಿಂದಿರಿ. ನನಗೆ ದೇವರಲ್ಲಿ ವಿಶ್ವಾಸವಿದೆ; ನನಗೆ ತಿಳಿಸಿದಂತೆಯೇ ಎಲ್ಲವೂ ನಡೆದೇ ತೀರುವುದು.</verse>
				<verse number="26">ನಾವೆಲ್ಲರೂ ಒಂದು ದ್ವೀಪವನ್ನು ತಲುಪಲಿದ್ದೇವೆ,” ಎಂದನು.</verse>
				<verse number="27">ಅದು ಹದಿನಾಲ್ಕನೆಯ ರಾತ್ರಿ. ಬಿರುಗಾಳಿ ನಮ್ಮನ್ನು ಆದ್ರಿಯ ಸಮುದ್ರದಲ್ಲಿ ಅತ್ತಿತ್ತ ಹೊಯ್ದಾಡಿಸುತ್ತಿತ್ತು. ಮಧ್ಯರಾತ್ರಿಯ ವೇಳೆಯಲ್ಲಿ ನಾವೊಂದು ಭೂಮಿಯನ್ನು ಸಮೀಪಿಸುತ್ತಿರುವ ಹಾಗೆ ನಾವಿಕರಿಗೆ ಕಂಡುಬಂದಿತು.</verse>
				<verse number="28">ನೀರಿನ ಆಳವನ್ನು ಪರೀಕ್ಷಿಸಿದಾಗ ಅದು ನಾಲ್ವತ್ತು ಮೀಟರು ಇರುವುದಾಗಿ ತಿಳಿಯಿತು. ಇನ್ನೂ ಸ್ವಲ್ಪ ಮುಂದಕ್ಕೆ ಸಾಗಿ ಮತ್ತೆ ಆಳ ನೋಡಿದಾಗ ಮೂವತ್ತು ಮೀಟರು ಎಂದು ತಿಳಿಯಿತು.</verse>
				<verse number="29">ನಮ್ಮ ಹಡಗು ಕಲ್ಲುಬಂಡೆಗಳನ್ನು ತಾಕಬಹುದೆಂಬ ದಿಗಿಲು ಉಂಟಾಯಿತು. ಆದುದರಿಂದ ಅವರು ಹಡಗಿನ ಹಿಂಭಾಗದ ನಾಲ್ಕು ಲಂಗರುಗಳನ್ನು ಕೆಳಗಿಳಿಸಿ ಬೆಳಗಾಗಲೆಂದು ಹಾರೈಸಿಕೊಂಡಿದ್ದರು.</verse>
				<verse number="30">ಅನಂತರ ನಾವಿಕರು ಹಡಗಿನ ಮುಂಭಾಗದಲ್ಲಿ ಕೆಲವು ಲಂಗರುಗಳನ್ನು ಹಾಕುವಂತೆ ನಟಿಸಿ, ದೋಣಿಯನ್ನು ನೀರಿಗಿಳಿಸಿ, ಹಡಗನ್ನು ಬಿಟ್ಟು ಪಲಾಯನ ಮಾಡಬೇಕೆಂದಿದ್ದರು.</verse>
				<verse number="31">ಆಗ ಪೌಲನು ಶತಾಧಿಪತಿಯನ್ನು ಮತ್ತು ಸೈನಿಕರನ್ನು ಉದ್ದೇಶಿಸಿ, “ಈ ನಾವಿಕರು ಹಡಗಿನಲ್ಲೇ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯದು,” ಎಂದು ಎಚ್ಚರಿಸಿದನು.</verse>
				<verse number="32">ಕೂಡಲೇ ಸೈನಿಕರು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಸಮುದ್ರದ ಪಾಲಾಗುವಂತೆ ಮಾಡಿದರು.</verse>
				<verse number="33">“ಬೆಳಗಾಗುತ್ತಿದ್ದಂತೆ ಪೌಲನು ಅವರೆಲ್ಲರನ್ನು ಕುರಿತು ಇಂತೆಂದನು: “ನೀವೆಲ್ಲರು ಚಿಂತೆಯಿಂದ ಹದಿನಾಲ್ಕು ದಿನಗಳವರೆಗೆ ಏನನ್ನೂ ತಿನ್ನದೆ ಇದ್ದೀರಿ;</verse>
				<verse number="34">ನಿಮ್ಮ ಪ್ರಾಣ ಉಳಿಸಿಕೊಳ್ಳಲು ಸ್ವಲ್ಪ ಆಹಾರವನ್ನಾದರೂ ತೆಗೆದುಕೊಳ್ಳಿ; ನಿಮ್ಮ ತಲೆಗೂದಲೊಂದೂ ಕೊಂಕಾಗದು,” ಎಂದು ಹೇಳಿ ಊಟಮಾಡುವಂತೆ ಪ್ರೋತ್ಸಾಹಿಸಿದನು.</verse>
				<verse number="35">ಹೀಗೆ ಹೇಳಿದ ಮೇಲೆ ಪೌಲನು ರೊಟ್ಟಿಯನ್ನು ತೆಗೆದುಕೊಂಡು, ಎಲ್ಲರ ಮುಂದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಅದನ್ನು ಮುರಿದು ತಿನ್ನಲಾರಂಭಿಸಿದನು.</verse>
				<verse number="36">ಆಗ ಅವರೆಲ್ಲರೂ ಧೈರ್ಯತಂದುಕೊಂಡು ಆಹಾರವನ್ನು ಸೇವಿಸಿದರು.</verse>
				<verse number="37">ಹಡಗಿನಲ್ಲಿ ನಾವು ಒಟ್ಟು ಇನ್ನೂರ ಎಪ್ಪತ್ತಾರು ಮಂದಿ ಇದ್ದೆವು.</verse>
				<verse number="38">ಪ್ರತಿಯೊಬ್ಬನೂ ಸಾಕಷ್ಟು ತಿಂದ ಮೇಲೆ ಗೋದಿಯನ್ನು ಸಮುದ್ರಕ್ಕೆ ಎಸೆದು ಹಡಗನ್ನು ಹಗುರಗೊಳಿಸಿದರು.</verse>
				<verse number="39">ಬೆಳಗಾದ ಮೇಲೆ, ದಡವಿರುವ ಕೊಲ್ಲಿಯೊಂದು ನಾವಿಕರಿಗೆ ಕಾಣಿಸಿತು. ಅದು ಯಾವ ತೀರವೆಂದು ಗುರುತು ಹಚ್ಚಲು ಅವರಿಂದಾಗಲಿಲ್ಲ. ಆದರೂ ಹಡಗನ್ನು ಸಾಧ್ಯವಾದರೆ ಆ ದಡಕ್ಕೆ ಮುಟ್ಟಿಸಬೇಕೆಂದು ಯೋಚಿಸಿದರು.</verse>
				<verse number="40">ಎಂದೇ ಹಗ್ಗಗಳನ್ನು ಕತ್ತರಿಸಿ ಲಂಗರುಗಳನ್ನು ಸಮುದ್ರದಲ್ಲೇ ಮುಳುಗಲೆಂದು ಬಿಟ್ಟರು. ಚುಕ್ಕಾಣಿಗಳಿಗೆ ಕಟ್ಟಲಾದ ಹಗ್ಗಗಳನ್ನು ಬಿಚ್ಚಿದರು. ಅನಂತರ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡದತ್ತ ಚಲಿಸಬಿಟ್ಟರು.</verse>
				<verse number="41">ಆದರೆ ಮಧ್ಯದಲ್ಲಿ ಹಡಗು ಮರಳು ದಿಬ್ಬಕ್ಕೆ ಢಿಕ್ಕಿಹೊಡೆದು ನೆಲ ಹತ್ತಿತ್ತು. ಹಡಗಿನ ಮುಂಭಾಗ ದಿಣ್ಣೆಗೆ ಸಿಲುಕಿ ಅಲ್ಲಾಡದೆ ನಿಂತಿತು; ಹಿಂಭಾಗ ಹುಚ್ಚು ಅಲೆಗಳ ಹೊಡೆತಕ್ಕೆ ಸಿಕ್ಕಿ ತುಂಡುತುಂಡಾಯಿತು.</verse>
				<verse number="42">ಕೈದಿಗಳಲ್ಲಿ ಯಾರೂ ಈಜಿ ತಲೆತಪ್ಪಿಸಿಕೊಳ್ಳದಂತೆ ಅವರನ್ನು ಕೊಲ್ಲಬೇಕೆಂದು ಸೈನಿಕರು ಆಲೋಚನೆ ಮಾಡಿದರು.</verse>
				<verse number="43">ಆದರೆ ಪೌಲನನ್ನು ಕಾಪಾಡಬೇಕೆಂದಿದ್ದ ಶತಾಧಿಪತಿ ಹಾಗೆ ಮಾಡುವುದನ್ನು ತಡೆದನು. ಪ್ರತಿಯಾಗಿ ಈಜು ಬಲ್ಲವರು ಮೊದಲು ಹಡಗಿನಿಂದ ಧುಮುಕಿ ಈಜಿಕೊಂಡು ಹೋಗಬೇಕು ಎಂತಲೂ,</verse>
				<verse number="44">ಮಿಕ್ಕವರು ಹಲಗೆಗಳ ಅಥವಾ ಹಡಗಿನ ತುಂಡುಗಳ ಸಹಾಯದಿಂದ ದಡಸೇರಬೇಕೆಂತಲೂ ಆಜ್ಞೆಮಾಡಿದನು. ಹೀಗೆ ಎಲ್ಲರೂ ಸುರಕ್ಷಿತವಾಗಿ ದಡವನ್ನು ಸೇರಿದರು.</verse>
			</chapter>
			<chapter number="28">
				<verse number="1">ನಾವು ಸುರಕ್ಷಿತವಾಗಿ ದಡವನ್ನು ಸೇರಿದ ಮೇಲೆ ಅದು ಮಾಲ್ಟ ದ್ವೀಪವೆಂದು ತಿಳಿದು ಬಂದಿತು.</verse>
				<verse number="2">ಅಲ್ಲಿಯ ನಿವಾಸಿಗಳು ನಮಗೆ ವಿಶೇಷ ಸಹಾನುಭೂತಿಯನ್ನು ತೋರಿದರು. ಮಳೆ ಹೊಯ್ದು ಚಳಿಯಾಗುತ್ತಿದ್ದುದರಿಂದ ಅವರು ಬೆಂಕಿಮಾಡಿ ನಮ್ಮೆಲ್ಲರನ್ನು ಬರಮಾಡಿಕೊಂಡರು.</verse>
				<verse number="3">ಪೌಲನು ಒಂದು ಹೊರೆ ಕಟ್ಟಿಗೆಯನ್ನು ಕೂಡಿಸಿ ತಂದು ಬೆಂಕಿಯ ಮೇಲೆ ಹಾಕುತ್ತಿದ್ದಾಗ ಬೆಂಕಿಯ ಶಾಖಕ್ಕೆ ವಿಷಸರ್ಪವೊಂದು ಹೊರಬಂದು ಅವನ ಕೈಗೆ ಸುತ್ತಿಕೊಂಡಿತು.</verse>
				<verse number="4">ದ್ವೀಪದ ನಿವಾಸಿಗಳು ಪೌಲನ ಕೈಯಿಂದ ನೇತಾಡುತ್ತಿರುವ ಹಾವನ್ನು ಕಂಡು, “ಇವನೊಬ್ಬ ಕೊಲೆಗಡುಕನೇ ಸರಿ; ಇವನು ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ವಿಧಿ ಇವನನ್ನು ಉಳಿಸಲಿಲ್ಲ,” ಎಂದು ತಮ್ಮಲ್ಲೇ ಮಾತನಾಡಿಕೊಂಡರು.</verse>
				<verse number="5">ಆದರೆ ಪೌಲನು ಹಾವನ್ನು ಬೆಂಕಿಗೆ ಒದರಿಬಿಟ್ಟನು. ಅವನಿಗೆ ಯಾವ ಅಪಾಯವೂ ಆಗಲಿಲ್ಲ.</verse>
				<verse number="6">ಆ ಜನರು, “ಈಗ ಅವನ ಮೈ ಊದಿಕೊಳ್ಳುತ್ತದೆ; ಈಗಲೇ ಅವನು ಫಕ್ಕನೆ ಸತ್ತುಬೀಳುತ್ತಾನೆ,” ಎಂದು ಕಾದಿದ್ದರು. ಎಷ್ಟುಹೊತ್ತು ಕಾದರೂ ಅವನಿಗೆ ಯಾವ ಹಾನಿಯೂ ಆಗಲಿಲ್ಲ. ಇದನ್ನು ಕಂಡ ಅವರು ತಮ್ಮ ಅಭಿಪ್ರಾಯವನ್ನು ಬದಲಿಸಿದರು. “ಇವನೊಬ್ಬ ದೇವರು,” ಎಂದುಕೊಂಡರು.</verse>
				<verse number="7">ಆ ದ್ವೀಪದ ಮುಖ್ಯಸ್ಥನಾದ ಪೊಪ್ಲಿಯನ ಹೊಲಗದ್ದೆಗಳು ನಾವಿದ್ದ ಸ್ಥಳದ ಪಕ್ಕದಲ್ಲೇ ಇದ್ದವು. ಅವನು ನಮ್ಮನ್ನು ಸ್ವಾಗತಿಸಿ ಮೂರು ದಿನಗಳವರೆಗೆ ಆದರದಿಂದ ಸತ್ಕರಿಸಿದನು.</verse>
				<verse number="8">ಪೊಪ್ಲಿಯನ ತಂದೆ ಜ್ವರದಿಂದಲೂ ರಕ್ತಬೇಧಿಯಿಂದಲೂ ಹಾಸಿಗೆ ಹಿಡಿದಿದ್ದನು. ಪೌಲನು ಅವನ ಬಳಿಗೆ ಹೋಗಿ, ಪ್ರಾರ್ಥನೆ ಮಾಡಿ, ತನ್ನ ಕರಗಳನ್ನು ಅವನ ಮೇಲಿಟ್ಟು, ಅವನನ್ನು ಗುಣಪಡಿಸಿದನು.</verse>
				<verse number="9">ಇದಾದ ನಂತರ ದ್ವೀಪದಲ್ಲಿದ್ದ ಮಿಕ್ಕರೋಗಿಗಳೂ ಬಂದು ಪೌಲನಿಂದ ಆರೋಗ್ಯವನ್ನು ಪಡೆದರು.</verse>
				<verse number="10">ಅವರೆಲ್ಲರು ನಮ್ಮನ್ನು ಹಲವಾರು ವಿಧದಲ್ಲಿ ಬಹುಮಾನಿಸಿದರು; ಮಾತ್ರವಲ್ಲ, ನಾವು ಅಲ್ಲಿಂದ ನೌಕಾಯಾನವನ್ನು ಮುಂದುವರಿಸಿದಾಗ, ನಮಗೆ ಅವಶ್ಯವಾದುದೆಲ್ಲವನ್ನು ತಂದು ಹಡಗಿನಲ್ಲಿಟ್ಟರು.</verse>
				<verse number="11">ಈಗಾಗಲೇ ಮೂರು ತಿಂಗಳು ಕಳೆದಿದ್ದವು. ಅಲೆಕ್ಸಾಂಡ್ರಿಯಕ್ಕೆ ಸೇರಿದ ‘ಅಶ್ವಿನಿ’ ಎಂಬ ಹಡಗೊಂದು ಚಳಿಗಾಲದ ನಿಮಿತ್ತ ಅಲ್ಲಿ ಲಂಗರುಹಾಕಿತ್ತು. ನಾವು ಅದನ್ನು ಹತ್ತಿ ಪ್ರಯಾಣ ಮುಂದುವರಿಸಿದೆವು.</verse>
				<verse number="12">ಸಿರಾಕೂಸ್ ಎಂಬ ಪಟ್ಟಣವನ್ನು ಸೇರಿ ಅಲ್ಲಿ ಮೂರು ದಿನ ತಂಗಿದೆವು.</verse>
				<verse number="13">ಅಲ್ಲಿಂದ ಮುಂದುವರಿದು ರೇಗಿಯ ಪಟ್ಟಣಕ್ಕೆ ಬಂದೆವು. ಮಾರನೆಯ ದಿನ ತೆಂಕಣಗಾಳಿ ಬೀಸತೊಡಗಿತು. ಎರಡೇ ದಿನಗಳಲ್ಲಿ ನಾವು ಪುತೋಲಿ ರೇವನ್ನು ಮುಟ್ಟಿದೆವು.</verse>
				<verse number="14">ಅಲ್ಲಿ ಕೆಲವು ಕ್ರೈಸ್ತಭಕ್ತಾದಿಗಳನ್ನು ಕಂಡೆವು. ತಮ್ಮೊಡನೆ ಒಂದು ವಾರ ತಂಗಬೇಕೆಂದು ಅವರು ನಮ್ಮನ್ನು ಕೇಳಿಕೊಂಡರು. ತರುವಾಯ ನಾವು ರೋಮಿಗೆ ಬಂದೆವು.</verse>
				<verse number="15">ಅಲ್ಲಿದ್ದ ಕ್ರೈಸ್ತಭಕ್ತಾದಿಗಳು ನಾವು ಬಂದ ವಿಷಯವನ್ನು ಕೇಳಿ ನಮ್ಮನ್ನು ಎದುರುಗೊಳ್ಳಲು ‘ಅಪ್ಪಿಯಾ’ ಮಾರುಕಟ್ಟೆಗೂ ತ್ರಿಛತ್ರದ ಬಳಿಗೂ ಬಂದರು. ಅವರನ್ನು ಕಂಡದ್ದೇ ಪೌಲನಿಗೆ ಪ್ರೋತ್ಸಾಹ ಉಂಟಾಯಿತು. ಅವನು ದೇವರಿಗೆ ಸ್ತೋತ್ರ ಸಲ್ಲಿಸಿದನು.</verse>
				<verse number="16">ನಾವು ರೋಮ್ ನಗರಕ್ಕೆ ಆಗಮಿಸಿದ ಮೇಲೆ, ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪ್ರತ್ಯೇಕವಾಗಿರಲು ಪೌಲನಿಗೆ ಅಪ್ಪಣೆ ಕೊಡಲಾಯಿತು.</verse>
				<verse number="17">ಮೂರು ದಿನಗಳ ನಂತರ ಪೌಲನು ಸ್ಥಳೀಯ ಯೆಹೂದ್ಯ ಮುಖಂಡರು ತನ್ನ ಬಳಿಗೆ ಬರುವಂತೆ ಹೇಳಿಕಳುಹಿಸಿದನು. ಅವರು ಬಂದಾಗ, “ನನ್ನ ಸೋದರ ಇಸ್ರಯೇಲರೇ, ನಾನು ನಮ್ಮ ಜನರಿಗೆ ವಿರೋಧವಾಗಿಯಾಗಲಿ, ನಮ್ಮ ಪೂರ್ವಜರಿಂದ ಬಂದ ಸಂಪ್ರದಾಯಗಳಿಗೆ ವಿರೋಧವಾಗಿಯಾಗಲಿ, ಏನನ್ನೂ ಮಾಡಿಲ್ಲ; ಆದರೂ ಜೆರುಸಲೇಮಿನಲ್ಲಿ ನನ್ನನ್ನು ಕೈದಿಯನ್ನಾಗಿಸಿ ರೋಮನರ ಕೈಗೆ ಒಪ್ಪಿಸಲಾಯಿತು.</verse>
				<verse number="18">ಇವರು ನನ್ನನ್ನು ವಿಚಾರಣೆಗೆ ಒಳಪಡಿಸಿದರು. ಮರಣದಂಡನೆಗೆ ಗುರಿಮಾಡುವಂಥ ಅಪರಾಧ ಏನನ್ನೂ ನನ್ನಲ್ಲಿ ಕಾಣಲಿಲ್ಲ. ಈ ಕಾರಣ ನನ್ನನ್ನು ಬಿಡುಗಡೆ ಮಾಡಬೇಕೆಂದಿದ್ದರು.</verse>
				<verse number="19">ಆದರೆ ಯೆಹೂದ್ಯರು ಇದನ್ನು ಪ್ರತಿಭಟಿಸಿದರು. ಆಗ ನಾನು ಚಕ್ರವರ್ತಿಗೇ ಅಪೀಲುಮಾಡಬೇಕಾಯಿತು. ನನ್ನ ಸ್ವದೇಶೀಯರ ಮೇಲೆ ದೋಷಾರೋಪಣೆ ಮಾಡಬೇಕೆಂದು ನಾನು ಹಾಗೆ ಮಾಡಲಿಲ್ಲ.</verse>
				<verse number="20">ಈ ಕಾರಣದಿಂದಲೇ ನಿಮ್ಮನ್ನು ನೋಡಿ ಮಾತನಾಡಲು ಬಯಸಿದೆ. ಇಸ್ರಯೇಲ್ ಜನತೆ ಯಾರ ನಿರೀಕ್ಷೆಯಲ್ಲಿ ಇದೆಯೋ, ಅವರ ನಿಮಿತ್ತವೇ ನಾನು ಹೀಗೆ ಸರಪಣಿಗಳಿಂದ ಬಂಧಿತನಾಗಿದ್ದೇನೆ,” ಎಂದನು.</verse>
				<verse number="21">ಅದಕ್ಕೆ ಅವರು, “ನಿನ್ನ ವಿಷಯವಾಗಿ ಜುದೇಯದಿಂದ ಯಾವ ಪತ್ರವೂ ಬಂದಿಲ್ಲ. ಅಲ್ಲಿಂದ ಬಂದ ಸಹೋದರರು ಯಾರೂ ಏನನ್ನೂ ವರದಿಮಾಡಿಲ್ಲ. ಯಾವ ದೋಷಾರೋಪಣೆಯನ್ನೂ ತಂದಿಲ್ಲ.</verse>
				<verse number="22">ಆದರೆ ನೀನು ಅನುಸರಿಸುವ ಪಂಥದ ವಿರುದ್ಧ ಎಲ್ಲೆಲ್ಲೂ ಜನರು ಮಾತನಾಡುತ್ತಿದ್ದಾರೆಂದು ಬಲ್ಲೆವು. ಆದುದರಿಂದ ನಿನ್ನ ಅಭಿಪ್ರಾಯವನ್ನು ನಿನ್ನ ಬಾಯಿಂದಲೇ ಕೇಳಬಯಸುತ್ತೇವೆ,” ಎಂದರು.</verse>
				<verse number="23">ಅದಕ್ಕಾಗಿ ಒಂದು ದಿನವನ್ನು ಗೊತ್ತುಮಾಡಿದರು. ಅಂದು ಅವರೆಲ್ಲರು ಪೌಲನು ವಾಸಮಾಡುತ್ತಿದ್ದ ಬಿಡಾರಕ್ಕೆ ಅಧಿಕ ಸಂಖ್ಯೆಯಲ್ಲಿ ಬಂದರು. ಪೌಲನು ಬೆಳಿಗ್ಗೆಯಿಂದ ಸಂಜೆಯವರೆಗೆ ದೇವರ ಸಾಮ್ರಾಜ್ಯವನ್ನು ಕುರಿತ ಶುಭಸಂದೇಶವನ್ನು ವಿವರಿಸಿದನು; ಮೋಶೆಯ ಧರ್ಮಶಾಸ್ತ್ರದ ಹಾಗೂ ಪ್ರವಾದಿಗಳ ಗ್ರಂಥಗಳ ಆಧಾರದ ಮೇಲೆ ಯೇಸುಸ್ವಾಮಿಯ ವಿಷಯವಾಗಿ ಅವರನ್ನು ಮನವೊಲಿಸಲು ಪ್ರಯತ್ನಿಸಿದನು.</verse>
				<verse number="24">ಅವನು ಹೇಳಿದ್ದು ಕೆಲವರಿಗೆ ಮನದಟ್ಟಾಯಿತು; ಮತ್ತೆ ಕೆಲವರು ನಂಬದೆಹೋದರು.</verse>
				<verse number="25">ಹೀಗೆ ಅವರು ತಮ್ಮತಮ್ಮೊಳಗೆ ಭಿನ್ನಾಭಿಪ್ರಾಯವುಳ್ಳವರಾಗಿ ಅಲ್ಲಿಂದ ಹೊರಟುಹೋಗಲಾರಂಭಿಸಿದರು. ಆಗ ಪೌಲನು ಹೀಗೆಂದನು: “ಪವಿತ್ರಾತ್ಮ ಅವರು ಯೆಶಾಯ ಪ್ರವಾದಿಯ ಮುಖಾಂತರ ನಿಮ್ಮ ಪೂರ್ವಜರಿಗೆ ಎಷ್ಟೊಂದು ವಿಹಿತವಾಗಿ ಹೇಳಿದ್ದಾರೆ:</verse>
				<verse number="26">‘ನೀನು ಆ ಜನರ ಬಳಿಗೆ ಹೋಗಿ ಅವರಿಗೆ ಇಂತೆನ್ನು: ಕೇಳಿ ಕೇಳಿಯೂ ಗ್ರಹಿಸರು ನೋಡಿ ನೋಡಿಯೂ ಕಾಣರೀ ಜನರು</verse>
				<verse number="27">ಇವರ ಹೃದಯ ಕಲ್ಲಾಗಿದೆ, ಕಿವಿ ಮಂದವಾಗಿದೆ, ಕಣ್ಣು ಮಬ್ಬಾಗಿದೆ. ಇಲ್ಲದಿರೆ ಇವರ ಕಣ್ಣು ಕಾಣುತ್ತಾ, ಕಿವಿ ಕೇಳುತ್ತಾ, ಹೃದಯ ಗ್ರಹಿಸುತ್ತಾ, ನನ್ನತ್ತ ತಿರುಗುತ್ತಿದ್ದರು. ದೇವರಾದ ನಾನಿವರನ್ನು ಸ್ವಸ್ಥಪಡಿಸುತ್ತಿದ್ದೆ.’</verse>
				<verse number="28">ಎಂದೇ ದೇವರಿಂದ ಬಂದಿರುವ ಜೀವ ಉದ್ಧಾರಕ ಸಂದೇಶವನ್ನು ಯೆಹೂದ್ಯೇತರರಿಗೆ ಕಳುಹಿಸಲಾಗಿದೆ. ಅವರು ಅದಕ್ಕೆ ಕಿವಿಗೊಡುವರು. ಇದು ನಿಮಗೆ ತಿಳಿದಿರಲಿ.”</verse>
				<verse number="29">ಈ ಮಾತುಗಳನ್ನು ಕೇಳಿ ಆದಮೇಲೆ ಯೆಹೂದ್ಯರು ತಮ್ಮತಮ್ಮೊಳಗೆ ತೀವ್ರವಾಗಿ ಚರ್ಚಿಸುತ್ತಾ ಹೊರಟುಹೋದರು.</verse>
				<verse number="30">ಪೌಲನು ತಾನು ಬಾಡಿಗೆಗೆ ತೆಗೆದುಕೊಂಡಿದ್ದ ಮನೆಯಲ್ಲಿ ಎರಡು ವರ್ಷಗಳವರೆಗೆ ವಾಸವಾಗಿದ್ದನು. ತನ್ನನ್ನು ನೋಡಲು ಬಂದವರನ್ನೆಲ್ಲಾ ಆದರದಿಂದ ಬರಮಾಡಿಕೊಳ್ಳುತ್ತಿದ್ದನು.</verse>
				<verse number="31">ಭಯಭೀತಿಯಿಲ್ಲದೆ ಹಾಗೂ ಅಡ್ಡಿಆತಂಕವಿಲ್ಲದೆ ದೇವರ ಸಾಮ್ರಾಜ್ಯವನ್ನು ಕುರಿತು ಪ್ರಬೋಧಿಸುತ್ತಿದ್ದನು; ಸ್ವಾಮಿ ಯೇಸುಕ್ರಿಸ್ತರ ವಿಷಯವಾಗಿ ಉಪದೇಶಿಸುತ್ತಿದ್ದನು.</verse>
			</chapter>
		</book>
		<book number="45">
			<chapter number="1">
				<verse number="1">ದೇವರಿಗೆ ಅತ್ಯಂತ ಪ್ರಿಯರು ಹಾಗು ದೇವಜನರಾಗಲು ಕರೆಹೊಂದಿದವರು ಆದ ರೋಮ್‍ನಗರ ನಿವಾಸಿಗಳೆಲ್ಲರಿಗೆ: ಕ್ರಿಸ್ತಯೇಸುವಿನ ದಾಸನೂ ಪ್ರೇಷಿತನಾಗಲು ಕರೆಹೊಂದಿದವನೂ ದೇವರ ಶುಭಸಂದೇಶವನ್ನು ಸಾರಲು ನೇಮಕಗೊಂಡವನೂ ಆದ ಪೌಲನು ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಹಾಗು ಪ್ರಭುವಾದ ಯೇಸುಕ್ರಿಸ್ತರು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ.</verse>
				<verse number="2">ದೇವರು ತಮ್ಮ ಶುಭಸಂದೇಶವನ್ನು ನೀಡುವುದಾಗಿ ಪ್ರವಾದಿಗಳ ಮುಖಾಂತರ ಮುಂಚಿತವಾಗಿಯೇ ಪವಿತ್ರಗ್ರಂಥದಲ್ಲಿ ವಾಗ್ದಾನಮಾಡಿದ್ದರು.</verse>
				<verse number="3">ಈ ಸಂದೇಶ ದೇವರ ಪುತ್ರನೂ ನಮ್ಮ ಪ್ರಭುವೂ ಆದ ಯೇಸುಕ್ರಿಸ್ತರನ್ನು ಕುರಿತಾದುದು. ಮನುಷ್ಯತ್ವದ ಮಟ್ಟಿಗೆ ಯೇಸು ದಾವೀದನ ವಂಶಜರು; ದೈವಿಕ ಪರಿಶುದ್ಧತೆಯ ಮಟ್ಟಿಗೆ ಇವರು ದೇವರ ಶಕ್ತಿಯನ್ನು ವ್ಯಕ್ತಪಡಿಸುವ ದೇವರ ಪುತ್ರ. ಸತ್ತು ಪುನರುತ್ಥಾನ ಹೊಂದಿ ಇದನ್ನು ಖಚಿತಪಡಿಸಿದವರು.</verse>
				<verse number="4"></verse>
				<verse number="5">ಇವರ ನಾಮ ಮಹಿಮೆಗೋಸ್ಕರವಾಗಿಯೇ ಸರ್ವಜನಾಂಗಗಳೂ ಇವರನ್ನು ವಿಶ್ವಾಸಿಸಿ, ವಿಧೇಯರಾಗಿ ನಡೆಯುವಂತೆ ಮಾಡಲು ಪ್ರೇಷಿತನಾಗುವ ಸೌಭಾಗ್ಯ ನನ್ನದಾಯಿತು. ಆ ಯೇಸುಕ್ರಿಸ್ತರ ಮುಖಾಂತರವೇ ದೇವರು ಈ ಭಾಗ್ಯವನ್ನು ನನಗೆ ಅನುಗ್ರಹಿಸಿದರು.</verse>
				<verse number="6">ಯೇಸುಕ್ರಿಸ್ತರಿಗೆ ಸ್ವಂತದವರಾಗಲು ಕರೆಹೊಂದಿರುವ ನೀವು ಕೂಡ ಈ ಸರ್ವಜನಾಂಗಗಳಲ್ಲಿ ಸೇರಿದ್ದೀರಿ.</verse>
				<verse number="7"></verse>
				<verse number="8">ಮೊಟ್ಟಮೊದಲನೆಯದಾಗಿ, ನಿಮ್ಮೆಲ್ಲರ ಪರವಾಗಿ ಯೇಸುಕ್ರಿಸ್ತರ ಮುಖಾಂತರ ನಾನು ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಏಕೆಂದರೆ, ನಿಮ್ಮ ವಿಶ್ವಾಸ ಹಾಗು ವಿಧೇಯತೆ ಇಡೀ ಜಗತ್ತಿನಲ್ಲಿ ಪ್ರಖ್ಯಾತವಾಗಿದೆ.</verse>
				<verse number="9">ನಾನು ಪ್ರಾರ್ಥನೆ ಮಾಡುವಾಗಲೆಲ್ಲ ತಪ್ಪದೆ, ನಿಮ್ಮ ಪರವಾಗಿ ವಿಜ್ಞಾಪನೆ ಮಾಡುತ್ತೇನೆ. ದೈವಚಿತ್ತದಿಂದ ನಾನು ನಿಮ್ಮಲ್ಲಿಗೆ ಬರಲು ಈಗಲಾದರೂ ಅನುಕೂಲವಾಗಲೆಂದು ಬೇಡಿಕೊಳ್ಳುತ್ತೇನೆ. ಇದಕ್ಕೆ ದೇವರೇ ಸಾಕ್ಷಿ. ಅವರ ಪುತ್ರನನ್ನೇ ಕುರಿತಾದ ಶುಭಸಂದೇಶವನ್ನು ಸಾರುತ್ತಾ ದೈವಸೇವೆಯನ್ನು ಮನಃಪೂರ್ವಕವಾಗಿ ಮಾಡಿಕೊಂಡು ಬರುತ್ತಿದ್ದೇನೆ.</verse>
				<verse number="10"></verse>
				<verse number="11">ನಾನು ನಿಮ್ಮನ್ನು ಕಂಡು, ನಿಮ್ಮೊಡನೆ ಅಧ್ಯಾತ್ಮಿಕ ವರಗಳನ್ನು ಹಂಚಿಕೊಂಡು, ನಿಮ್ಮನ್ನು ದೃಢಪಡಿಸಲು ಅತ್ಯಾಸಕ್ತಿಯಿಂದಿದ್ದೇನೆ.</verse>
				<verse number="12">ಅಂದರೆ, ನನ್ನ ವಿಶ್ವಾಸದಿಂದ ನೀವೂ ನಿಮ್ಮ ವಿಶ್ವಾಸದಿಂದ ನಾನೂ - ಪರಸ್ಪರ ಪ್ರಯೋಜನವನ್ನು ಪಡೆಯಬೇಕೆಂಬುದೇ ನನ್ನ ಆಶಯ.</verse>
				<verse number="13">ಸಹೋದರರೇ, ಈ ವಿಷಯ ನಿಮಗೆ ತಿಳಿದಿರಲಿ; ನನ್ನ ಸೇವೆ ಇತರ ಜನರಲ್ಲಿ ಫಲಪ್ರದವಾದಂತೆ ನಿಮ್ಮಲ್ಲೂ ಫಲಪ್ರದವಾಗಬೇಕೆಂಬ ಉದ್ದೇಶದಿಂದ ನಿಮ್ಮ ಬಳಿಗೆ ಬರಲು ನಾನು ಅನೇಕ ಸಾರಿ ಪ್ರಯತ್ನಿಸಿದೆನು. ಆದರೆ, ಕಾರಣಾಂತರಗಳಿಂದ ಇದುವರೆಗೂ ಬರಲು ಸಾಧ್ಯವಾಗಲಿಲ್ಲ.</verse>
				<verse number="14">ಜನರು ನಾಗರೀಕರೇ ಆಗಿರಲಿ, ಅನಾಗರಿಕರೇ ಆಗಿರಲಿ, ವಿದ್ಯಾವಂತರೇ ಆಗಿರಲಿ, ಅವಿದ್ಯಾವಂತರೇ ಆಗಿರಲಿ, ಅವರೆಲ್ಲರಿಗೂ ನಾನು ಕರ್ತವ್ಯಬದ್ಧನಾಗಿದ್ದೇನೆ.</verse>
				<verse number="15">ಆದುದರಿಂದಲೇ ರೋಮ್ ನಗರದಲ್ಲಿರುವ ನಿಮಗೂ ಶುಭಸಂದೇಶವನ್ನು ಸಾರಲು ನಾನು ಆತುರದಿಂದ ಎದುರುನೋಡುತ್ತಿದ್ದೇನೆ.</verse>
				<verse number="16">ಶಭಸಂದೇಶದ ವಿಷಯದಲ್ಲಿ ನಾನು ನಾಚಿಕೆಪಡುವವನೇ ಅಲ್ಲ. ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ವಿಶ್ವಾಸಿಸುವ ಪ್ರತಿಯೊಬ್ಬನಿಗೂ ಈ ಶುಭಸಂದೇಶವು ಜೀವೋದ್ಧಾರವನ್ನು ತರುವ ದೇವರ ಶಕ್ತಿಯಾಗಿದೆ.</verse>
				<verse number="17">ದೇವರು ಮಾನವನನ್ನು ಹೇಗೆ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ ಎಂಬುದನ್ನು ಶುಭಸಂದೇಶವು ಪ್ರಕಟಿಸುತ್ತದೆ. ಇಂಥ ಸಂಬಂಧವು ಆದಿಯಿಂದ ಅಂತ್ಯದವರೆಗೂ ವಿಶ್ವಾಸದಿಂದ ಮಾತ್ರ ಸಾಧ್ಯ. “ಯಾರು ದೇವರೊಡನೆ ಸತ್ಸಂಬಂಧ ಹೊಂದಿರುತ್ತಾರೋ ಅವರು ವಿಶ್ವಾಸದಿಂದಲೇ ಸಜ್ಜೀವವನ್ನು ಪಡೆಯುತ್ತಾರೆ,\ ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.</verse>
				<verse number="18">ಮಾನವರ ಎಲ್ಲಾ ಪಾಪಾಕ್ರಮಗಳ ಮೇಲೆ ದೇವರ ಕೋಪಾಗ್ನಿ ಸ್ವರ್ಗದಿಂದ ಎರಗುವುದೆಂದು ಪ್ರಕಟವಾಗುತ್ತಿದೆ. ಏಕೆಂದರೆ, ಅವರ ಅಕ್ರಮ ನಡತೆ ಸತ್ಯವನ್ನು ಅಡಗಿಸುತ್ತಿದೆ.</verse>
				<verse number="19">ದೇವರ ವಿಷಯವಾಗಿ ಮಾನವರು ಏನನ್ನು ಅರಿತುಕೊಳ್ಳಲು ಸಾಧ್ಯವೋ ಅದು ಅವರಿಗೆ ಚೆನ್ನಾಗಿ ತಿಳಿದಿದೆ. ದೇವರೇ ಅದನ್ನು ಅವರಿಗೆ ಸ್ಪಷ್ಟಪಡಿಸಿದ್ದಾರೆ.</verse>
				<verse number="20">ದೇವರು ಲೋಕವನ್ನು ಸೃಷ್ಟಿಸಿದಂದಿನಿಂದ ಅವರ ಅಗೋಚರ ಗುಣಲಕ್ಷಣಗಳು, ಅವರ ಅನಂತ ಶಕ್ತಿ ಮತ್ತು ದೈವಸ್ವಭಾವ ಮನುಷ್ಯರಿಗೆ ಸೃಷ್ಟಿಗಳ ಮೂಲಕವೇ ವೇದ್ಯವಾಗುತ್ತಿವೆ. ಆದುದರಿಂದ ಮಾನವರು ತಮ್ಮ ಅಜ್ಞಾನಕ್ಕೆ ಯಾವ ನೆಪವನ್ನು ಒಡ್ಡಲೂ ಸಾಧ್ಯವಿಲ್ಲ.</verse>
				<verse number="21">ದೇವರನ್ನು ಅವರು ಅರಿತಿದ್ದರೂ ದೇವರೆಂದು ಗೌರವಿಸಲಿಲ್ಲ; ದೇವರಿಗೆ ಉಪಕಾರ ಸ್ಮರಣೆಯನ್ನು ಮಾಡಲಿಲ್ಲ. ಬದಲಾಗಿ ಅವರು ವ್ಯರ್ಥ ಆಲೋಚನೆಗಳಲ್ಲಿ ಮಗ್ನರಾದರು. ಅವರ ವಿವೇಕರಹಿತ ಮನಸ್ಸು ಅಂಧಕಾರಮಯ ಆಯಿತು.</verse>
				<verse number="22">ತಾವೇ ಜ್ಞಾನಿಗಳೆಂದುಕೊಚ್ಚಿಕೊಳ್ಳುತ್ತ ಅವರು ನಿಜವಾಗಿಯೂ ಮೂರ್ಖರಾದರು.</verse>
				<verse number="23">ಅಮರದೇವರನ್ನು ಆರಾಧಿಸುವುದನ್ನು ಬಿಟ್ಟು ಅಳಿದುಹೋಗುವಂಥ ನರಮಾನವರ, ಪ್ರಾಣಿಪಕ್ಷಿಗಳ, ಸರ್ಪಾದಿಗಳ ವಿಗ್ರಹಗಳನ್ನು ಮಾಡಿ ಆರಾಧಿಸತೊಡಗಿದರು.</verse>
				<verse number="24">ಆದುದರಿಂದ, ಮಾನವರು ಮನಸ್ಸಿನ ಆಶಾಪಾಶಗಳಿಗೆ ಬಲಿಯಾಗಿ ತಮ್ಮ ದೇಹಗಳಿಂದ ತಮ್ಮತಮ್ಮಲ್ಲೇ ಅಶ್ಲೀಲಕೃತ್ಯಗಳೆಸಗಲೆಂದು ದೇವರು ಅವರನ್ನು ಅಶುದ್ಧ ನಡತೆಗೆ ಬಿಟ್ಟುಬಿಟ್ಟರು.</verse>
				<verse number="25">ಅವರು ದೇವರ ಸತ್ಯವನ್ನು ಬಿಟ್ಟು ಅಸತ್ಯವಾದುದನ್ನು ಅಂಗೀಕರಿಸಿದರು; ಸೃಷ್ಟಿಕರ್ತನನ್ನು ಆರಾಧಿಸದೆ, ಸೃಷ್ಟಿಯಾದ ವಸ್ತುಗಳನ್ನೇ ಆರಾಧಿಸಿ, ಸೇವೆಸಲ್ಲಿಸಿದರು. ಸರ್ವಕಾಲಕ್ಕೂ ಸೃಷ್ಟಿಕರ್ತರೊಬ್ಬರಿಗೇ ಸ್ತುತಿಸ್ತೋತ್ರ ಸಲ್ಲತಕ್ಕದ್ದು. ಆಮೆನ್.</verse>
				<verse number="26">ಮಾನವರು ಈ ರೀತಿ ವರ್ತಿಸಿದ್ದರಿಂದಲೇ ದೇವರು ಅವರನ್ನು ತುಚ್ಛವಾದ ಕಾಮಾಭಿಲಾಷೆಗಳಿಗೆ ಬಿಟ್ಟುಬಿಟ್ಟರು. ಅವರ ಸ್ತ್ರೀಯರು, ಸ್ವಾಭಾವಿಕವಾದ ಭೋಗವನ್ನು ತೊರೆದು ಸ್ವಭಾವಕ್ಕೆ ವಿರುದ್ಧವಾದ ಕಾಮಕೃತ್ಯಗಳನ್ನು ಮಾಡಿದರು.</verse>
				<verse number="27">ಅಂತೆಯೇ ಪುರುಷರು ಸಹ ಸ್ವಾಭಾವಿಕವಾದ ಸ್ತ್ರೀಸಂಗವನ್ನು ತೊರೆದು, ತಮ್ಮತಮ್ಮಲ್ಲಿಯೇ ಕಾಮೋದ್ರೇಕಗೊಂಡರು; ಸಲಿಂಗಕಾಮಿಗಳಾದರು; ಲಜ್ಜಾಹೀನರಾಗಿ ವರ್ತಿಸಿದರು; ತಮ್ಮ ದುರ್ನಡತೆಗೆ ತಕ್ಕ ಶಿಕ್ಷೆಯನ್ನು ತಮ್ಮ ಮೇಲೆ ಬರಮಾಡಿಕೊಂಡರು.</verse>
				<verse number="28">ಅವರು ತಮಗಿದ್ದ ದೇವರ ಜ್ಞಾನವನ್ನು ತಿರಸ್ಕರಿಸಿದ್ದರಿಂದ, ದೇವರು ಅವರನ್ನು ಅಶ್ಲೀಲ ನಡವಳಿಕೆಗೆ ಬಿಟ್ಟುಬಿಟ್ಟರು.</verse>
				<verse number="29">ಸಕಲ ವಿಧವಾದ ಅನ್ಯಾಯ, ಅಕ್ರಮ, ದುರಾಶೆ, ದುರ್ನಡತೆ ಅವರಲ್ಲಿ ತುಂಬಿಕೊಂಡವು. ಮತ್ಸರ, ಕೊಲೆ, ಕಲಹ, ಕಪಟತನ, ಹಗೆತನ, ಇವೆಲ್ಲವೂ ಅವರಲ್ಲಿ ತುಂಬಿಹೋಗಿವೆ.</verse>
				<verse number="30">ಅವರು ಹರಟೆಮಲ್ಲರು, ಚಾಡಿಕೋರರು, ದೇವದ್ರೋಹಿಗಳು, ಗರ್ವಿಗಳು, ಅಹಂಕಾರಿಗಳು, ಜಂಭಕೊಚ್ಚಿಕೊಳ್ಳುವವರು, ಕೇಡುಬಗೆಯುವವರು, ತಂದೆತಾಯಿಗಳಿಗೆ ಅವಿಧೇಯರು ಆಗಿದ್ದಾರೆ.</verse>
				<verse number="31">ಮಾತ್ರವಲ್ಲ, ಅವರು ಅವಿವೇಕಿಗಳು, ಅಪ್ರಾಮಾಣಿಕರು, ನಿಷ್ಕರುಣಿಗಳು ಮತ್ತು ನಿರ್ದಯಿಗಳು.</verse>
				<verse number="32">ಇಂಥವುಗಳನ್ನು ಮಾಡುವವರು ಮರಣದಂಡನೆಗೆ ಪಾತ್ರರು ಎಂಬ ದೈವನಿಯಮವನ್ನು ಅರಿತಿದ್ದರೂ ಇಂಥ ಹೀನ ಕೃತ್ಯಗಳನ್ನು ಮಾಡುತ್ತಾರೆ. ತಾವು ಮಾಡುವುದೇ ಅಲ್ಲದೆ ಹಾಗೆಮಾಡುವ ಇತರರನ್ನೂ ಪ್ರೋತ್ಸಾಹಿಸುತ್ತಾರೆ.</verse>
			</chapter>
			<chapter number="2">
				<verse number="1">ಇತರರು ದೋಷಿಗಳೆಂದು ತೀರ್ಪುನೀಡುವ ಮಾನವನೇ, ನೀನು ಯಾರೇ ಆಗಿರು, ನೀನು ಮಾತ್ರ ನಿರ್ದೋಷಿಯೆಂದು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಇತರರಿಗೆ ತೀರ್ಪುನೀಡುವ ನೀನು ಅವರು ಮಾಡುವ ತಪ್ಪುಗಳನ್ನು ನೀನೂ ಮಾಡಿದೆಯಾದರೆ, ನಿನ್ನನ್ನು ನೀನೇ ದೋಷಿಯೆಂದು ತೀರ್ಪುಮಾಡಿಕೊಂಡ ಹಾಗಾಯಿತು.</verse>
				<verse number="2">ಇಂಥ ಅಪರಾಧಗಳನ್ನು ಮಾಡುವವರ ಬಗ್ಗೆ ದೇವರು ನೀಡುವ ತೀರ್ಪು ನ್ಯಾಯಬದ್ಧವಾದುದು ಎಂಬುದನ್ನು ನಾವು ಬಲ್ಲೆವು.</verse>
				<verse number="3">ಹೀಗಿರುವಾಗ, ಇತರರಿಗೆ ಯಾವ ಅಪರಾಧಕ್ಕಾಗಿ ತೀರ್ಪುನೀಡಿದೆಯೋ ಅಂಥ ಅಪರಾಧವನ್ನೇ ನೀನೂ ಮಾಡುತ್ತಿರುವೆಯಲ್ಲಾ! ದೇವರು ಕೊಡುವ ನ್ಯಾಯತೀರ್ಪಿನಿಂದ ನೀನು ಮಾತ್ರ ತಪ್ಪಿಸಿಕೊಳ್ಳುವಿಯೆಂದು ನೆನೆಸುತ್ತೀಯೋ?</verse>
				<verse number="4">ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?</verse>
				<verse number="5">ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.</verse>
				<verse number="6">ಪ್ರತಿಯೊಬ್ಬನಿಗೂ ದೇವರು ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುತ್ತಾರೆ.</verse>
				<verse number="7">ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.</verse>
				<verse number="8">ಸ್ವಾರ್ಥಸಾಧಕರಾಗಿದ್ದು, ಸತ್ಯಕ್ಕೆ ಮಣಿಯದೆ, ದುರ್ಮಾರ್ಗವನ್ನೇ ಅವಲಂಬಿಸಿ ನಡೆಯುವವರ ಮೇಲೆ ದೇವರ ಕೋಪವೂ ಆಕ್ರೋಶವೂ ಎರಗುತ್ತವೆ.</verse>
				<verse number="9">ಯೆಹೂದ್ಯರನ್ನು ಮೊದಲ್ಗೊಂಡು, ಇತರರಿಗೂ ಪಾಪಕೃತ್ಯಗಳನ್ನು ಮಾಡುವ ಪ್ರತಿಯೊಬ್ಬರಿಗೂ ಕಷ್ಟಸಂಕಟಗಳು ಕಾದಿರುತ್ತವೆ.</verse>
				<verse number="10">ಅಂತೆಯೇ, ಯೆಹೂದ್ಯರನ್ನು ಮೊದಲ್ಗೊಂಡು ಇತರರಿಗೂ ಸತ್ಕಾರ್ಯಗಳನ್ನು ಮಾಡುವ ಪ್ರತಿಯೊಬ್ಬರಿಗೂ ಮಹಿಮೆ, ಗೌರವ, ಶಾಂತಿ ಲಭಿಸುತ್ತವೆ.</verse>
				<verse number="11">ದೇವರು ಪಕ್ಷಪಾತಿ ಅಲ್ಲ.</verse>
				<verse number="12">ಮೋಶೆಯ ಧರ್ಮಶಾಸ್ತ್ರದ ಅರಿವಿಲ್ಲದೆ ಪಾಪಮಾಡುವವರು ಆ ಶಾಸ್ತ್ರದ ತೀರ್ಪಿಗೆ ಒಳಗಾಗದೆಯೋ ನಾಶವಾಗುತ್ತಾರೆ. ಆ ಧರ್ಮಶಾಸ್ತ್ರದ ಅರಿವಿದ್ದೂ ಪಾಪಮಾಡುವವರು ಆ ಶಾಸ್ತ್ರದ ತೀರ್ಪಿಗೆ ಗುರಿಯಾಗುತ್ತಾರೆ.</verse>
				<verse number="13">ಧರ್ಮಶಾಸ್ತ್ರವನ್ನು ಆಲಿಸಿದ ಮಾತ್ರಕ್ಕೆ ಯಾರೂ ದೇವರೊಡನೆ ಸತ್ಸಂಬಂಧವನ್ನು ಪಡೆಯಲು ಸಾಧ್ಯವಿಲ್ಲ. ಅದನ್ನು ಆಲಿಸುವುದರ ಜೊತೆಗೆ ಪಾಲಿಸಲೂ ಬೇಕು.</verse>
				<verse number="14">ಯೆಹೂದ್ಯರಲ್ಲದವರಿಗೆ, ಮೋಶೆಯ ಧರ್ಮಶಾಸ್ತ್ರ ಇರುವುದಿಲ್ಲ. ಅವರು ಅದರ ವಿಧಿನಿಯಮಗಳನ್ನು ಸ್ವಾಭಾವಿಕವಾಗಿ ಅನುಸರಿಸಿದ್ದೇ ಆದರೆ, ಅವರಿಗೆ ಧರ್ಮಶಾಸ್ತ್ರವಿಲ್ಲದಿದ್ದರೂ ಅವರ ಅಂತರಂಗವೇ ಅವರಿಗೆ ಧರ್ಮಶಾಸ್ತ್ರವಾಗುತ್ತದೆ.</verse>
				<verse number="15">ಧರ್ಮಶಾಸ್ತ್ರದ ವಿಧಿನಿಯಮಗಳು ಅವರ ಹೃದಯಗಳಲ್ಲಿ ಲಿಖಿತವಾಗಿವೆಯೆಂದು ಅವರ ನಡತೆಯಿಂದಲೇ ವೇದ್ಯವಾಗುತ್ತದೆ. ಇದು ಸತ್ಯವೆಂಬುದನ್ನು ಅವರ ಮನಸ್ಸಾಕ್ಷಿಯು ಖಚಿತಪಡಿಸುತ್ತದೆ. ಅವರ ಅಂತಃಪ್ರಜ್ಞೆಯೇ ಅವರನ್ನು ದೋಷಿಗಳೆಂದೋ ಇಲ್ಲವೆ ನಿರ್ದೋಷಿಗಳೆಂದೋ ತೀರ್ಮಾನಿಸುತ್ತದೆ.</verse>
				<verse number="16">ನಾನು ಬೋಧಿಸುವ ಶುಭಸಂದೇಶದ ಪ್ರಕಾರ, ದೇವರು ಯೇಸುಕ್ರಿಸ್ತರ ಮುಖಾಂತರ ಮಾನವನ ಗುಟ್ಟುಗಳನ್ನು ರಟ್ಟುಮಾಡಿ, ತೀರ್ಪುಕೊಡುವ ದಿನ ಬಂದೇ ಬರುತ್ತದೆ. ಆ ದಿನ ಇದೆಲ್ಲಾ ಸಂಭವಿಸುತ್ತದೆ.</verse>
				<verse number="17">“ನಾನು ಯೆಹೂದ್ಯನು” ಎಂದು ಹೇಳಿಕೊಳ್ಳುತ್ತಿರುವ ನಿನ್ನ ವಿಷಯವಾದರೂ ಏನು? ಧರ್ಮಶಾಸ್ತ್ರವನ್ನು ಆಧಾರವಾಗಿಟ್ಟುಕೊಂಡು ದೇವರಿಗೆ ಸೇರಿದವನೆಂದು ಕೊಚ್ಚಿಕೊಳ್ಳುತ್ತೀಯೆ;</verse>
				<verse number="18">ದೇವರ ಚಿತ್ತವನ್ನು ಅರಿತಿರುವುದಾಗಿ ನೆನೆಸುತ್ತೀಯೆ: ಉತ್ತಮವಾದುದನ್ನು ಆರಿಸಿಕೊಳ್ಳಲು ಧರ್ಮಶಾಸ್ತ್ರದಿಂದ ಕಲಿತುಕೊಂಡಿರುವುದಾಗಿ ಹೇಳಿಕೊಳ್ಳುತ್ತೀಯೆ;</verse>
				<verse number="19">ನೀನು ಕುರುಡರಿಗೆ ದಾರಿ ತೋರಿಸುವವನೂ ಕತ್ತಲೆಯಲ್ಲಿರುವವರಿಗೆ ಬೆಳಕೂ ಬುದ್ಧಿಹೀನರಿಗೆ ಬೋಧಕನೂ</verse>
				<verse number="20">ಮಕ್ಕಳಿಗೆ ಶಿಕ್ಷಕನೂ ಆಗಿರುವುದಾಗಿ ದೃಢವಾಗಿ ನಂಬಿಕೊಂಡಿದ್ದೀಯೆ; ಧರ್ಮಶಾಸ್ತ್ರದಲ್ಲಿ ಜ್ಞಾನ ಮತ್ತು ಸತ್ಯ ಮೇಳೈಸಿರುವುದಾಗಿ ಭಾವಿಸುತ್ತೀಯೆ.</verse>
				<verse number="21">ಹೀಗೆ, ಇತರರಿಗೆ ಉಪದೇಶಿಸುವ ನೀನು, ನಿನಗೆ ನೀನೇ ಉಪದೇಶ ಮಾಡಿಕೊಳ್ಳಬಾರದೇನು? “ಕದಿಯಬಾರದು” ಎಂದು ಬೋಧಿಸುವ ನೀನೇ ಕಳ್ಳತನ ಮಾಡುತ್ತೀಯೇನು?</verse>
				<verse number="22">“ವ್ಯಭಿಚಾರ ಮಾಡಬಾರದು” ಎಂದು ಹೇಳುವ ನೀನೇ ವ್ಯಭಿಚಾರ ಮಾಡುತ್ತೀಯೇನು? ವಿಗ್ರಹಗಳನ್ನು ವಿರೋಧಿಸುವ ನೀನು ದೇವಾಲಯವನ್ನೇ ದೋಚುತ್ತೀಯೇನು?</verse>
				<verse number="23">ದೇವರಿಂದಲೇ ನಿಯಮಗಳನ್ನು ಪಡೆದಿರುವುದಾಗಿ ಕೊಚ್ಚಿಕೊಳ್ಳುವ ನೀನು ಆ ನಿಯಮಗಳನ್ನೇ ಉಲ್ಲಂಘಿಸಿ ದೇವರಿಗೆ ದ್ರೋಹಬಗೆಯುತ್ತೀಯೇನು?</verse>
				<verse number="24">ಈ ಕಾರಣದಿಂದ. “ನಿಮ್ಮ ದೆಸೆಯಿಂದಲೇ ಯೆಹೂದ್ಯರಲ್ಲದವರು ದೇವರ ಹೆಸರನ್ನು ದೂಷಿಸುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.</verse>
				<verse number="25">ನೀನು ಧರ್ಮಶಾಸ್ತ್ರಕ್ಕೆ ವಿಧೇಯನಾಗಿ ನಡೆದರೆ, ನೀನು ಮಾಡಿಸಿಕೊಂಡಿರುವ ಸುನ್ನತಿಗೆ ಅರ್ಥವಿದೆ. ಆದರೆ ನಿನ್ನ ನಡತೆ ಧರ್ಮಶಾಸ್ತ್ರಕ್ಕೆ ವ್ಯತಿರಿಕ್ತವಾಗಿದ್ದರೆ ನೀನು ಸುನ್ನತಿ ಮಾಡಿಸಿಕೊಂಡಿದ್ದರೂ ಮಾಡಿಸಿಕೊಳ್ಳದಂತೆಯೇ ಸರಿ.</verse>
				<verse number="26">ಸುನ್ನತಿ ಮಾಡಿಸಿಕೊಳ್ಳದ ಮತ್ತೊಬ್ಬನು ಧರ್ಮಶಾಸ್ತ್ರದ ವಿಧಿಗಳನ್ನು ಪಾಲಿಸಿಕೊಂಡು ಬಂದವನಾಗಿದ್ದರೆ, ದೇವರು ಅವನನ್ನು ಸುನ್ನತಿ ಮಾಡಿಸಿಕೊಂಡವನಂತೆ ಪರಿಗಣಿಸುವುದಿಲ್ಲವೆ?</verse>
				<verse number="27">ನೀವು ಸುನ್ನತಿ ಮಾಡಿಸಿಕೊಂಡಿದ್ದೀರಿ; ಲಿಖಿತ ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ.</verse>
				<verse number="28">ಬಾಹ್ಯಾಚರಣೆಯಲ್ಲಿ ಮಾತ್ರ ಯೆಹೂದ್ಯನಾಗಿರುವವನು ನಿಜವಾದ ಯೆಹೂದ್ಯನಲ್ಲ. ಅಂತೆಯೇ, ನಿಜವಾದ ಸುನ್ನತಿಯು ಕೇವಲ ಬಾಹ್ಯಲಕ್ಷಣವುಳ್ಳ ಶಾರೀರಿಕ ಪದ್ಧತಿಯಲ್ಲ.</verse>
				<verse number="29">ಯಾರು ಅಂತರಂಗದಲ್ಲಿ ಯೆಹೂದ್ಯನಾಗಿರುತ್ತಾನೋ ಅವನೇ ನಿಜವಾದ ಯೆಹೂದ್ಯನು. ಅಂಥವನಿಗೆ ಅಂತರ್ಯದಲ್ಲಿ ಸುನ್ನತಿಯಾಗಿರುತ್ತದೆ. ಇದು ಲಿಖಿತ ಧರ್ಮಶಾಸ್ತ್ರದಿಂದ ಆದದ್ದಲ್ಲ, ದೇವರಾತ್ಮ ಅವರಿಂದ ಆದ ಕಾರ್ಯ; ಇಂಥವನು ಮೆಚ್ಚುಗೆಯನ್ನು ಪಡೆಯುವುದು ಮನುಷ್ಯನಿಂದಲ್ಲ, ದೇವರಿಂದ.</verse>
			</chapter>
			<chapter number="3">
				<verse number="1">ಹಾಗಾದರೆ ಯೆಹೂದ್ಯರ ವೈಶಿಷ್ಟ್ಯವೇನು? ಅವರು ಸುನ್ನತಿ ಮಾಡಿಸಿಕೊಂಡುದರಿಂದ ಪಡೆದ ಪ್ರಯೋಜನವೇನು?</verse>
				<verse number="2">ಹೌದು, ಎಲ್ಲಾ ವಿಧದಲ್ಲಿಯೂ ಹೆಚ್ಚು ಪ್ರಯೋಜನವಿದೆ. ಮೊದಲನೆಯದಾಗಿ, ದೇವರು ತಮ್ಮ ಸಂದೇಶವನ್ನು ವಹಿಸಿಕೊಟ್ಟದ್ದು ಯೆಹೂದ್ಯರಿಗೆ ತಾನೆ?</verse>
				<verse number="3">ಅವರಲ್ಲಿ ಕೆಲವರು ಅಪ್ರಾಮಾಣಿಕರಾಗಿ ನಡೆದುಕೊಂಡಿದ್ದರೆ ಏನಾಯಿತು? ದೇವರ ಪ್ರಾಮಾಣಿಕತನಕ್ಕೆ ಭಂಗಬರಲು ಸಾಧ್ಯವೆ?</verse>
				<verse number="4">ಎಂದಿಗೂ ಇಲ್ಲ. ಮಾನವರೆಲ್ಲರು ಸುಳ್ಳುಗಾರರಾದರೂ ದೇವರು ಮಾತ್ರ ಸತ್ಯವಂತರೇ ಸರಿ. ಪವಿತ್ರಗ್ರಂಥದಲ್ಲಿ ಹೀಗೆಂದು ಬರೆದಿದೆ: “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.”</verse>
				<verse number="5">ನಮ್ಮ ಅಕ್ರಮ ನಡತೆ ದೇವರ ನ್ಯಾಯನೀತಿಯನ್ನು ಮತ್ತಷ್ಟು ಸ್ಪಷ್ಟವಾಗಿ ತೋರಿಸುವ ಸಾಧನವಾದರೆ ಆಗ ಏನು ಹೇಳುವುದು? ಆ ಅಕ್ರಮವಾಗಿ ದೇವರು ನಮ್ಮ ಮೇಲೆ ಕೋಪ ಕಾರಿದರೆ ಅದು ಅನ್ಯಾಯವೆಂದು ನಾವು ಹೇಳಬಹುದೆ? (ಮನುಷ್ಯನಿಗೆ ಸಹಜವಾಗಿ ಏಳುವ ಪ್ರಶ್ನೆಯಿದು)</verse>
				<verse number="6">ಎಂದಿಗೂ ಇಲ್ಲ! ದೇವರು ನ್ಯಾಯವಂತರಲ್ಲದಿದ್ದರೆ ಲೋಕಕ್ಕೆ ನ್ಯಾಯತೀರ್ಪು ಕೊಡಲು ಹೇಗೆ ತಾನೆ ಸಾಧ್ಯ?</verse>
				<verse number="7">ನಮ್ಮ ಅಸತ್ಯತೆಯಿಂದ ದೇವರ ಸತ್ಯತೆ ವ್ಯಕ್ತವಾಗಿ ಅವರ ಮಹಿಮೆ ಬೆಳಗುವುದಾದರೆ ನನಗೇಕೆ ಪಾಪಿಯೆಂದು ತೀರ್ಪಾಗಬೇಕು?</verse>
				<verse number="8">“ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” - ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.</verse>
				<verse number="9">ಹಾಗಾದರೆ, ಯೆಹೂದ್ಯರಾದ ನಾವು ಇತರರಿಗಿಂತಲೂ ಶ್ರೇಷ್ಠರೋ? ಎಷ್ಟುಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ, ಇತರರೇ ಆಗಲಿ, ಎಲ್ಲರೂ ಪಾಪದ ಆಳ್ವಿಕೆಗೆ ಅಧೀನರು. ಇದನ್ನು ನಾನು ಈಗಾಗಲೇ ಸ್ಪಷ್ಟೀಕರಿಸಿದ್ದೇನೆ.</verse>
				<verse number="10">ಪವಿತ್ರಗ್ರಂಥದಲ್ಲಿ ಹೀಗಿದೆ:</verse>
				<verse number="11">ದೇವರೊಡನೆ ಸತ್ಸಂಬಂಧಿತರಾರೂ ಇಲ್ಲ ಸನ್ಮತಿಗಳು ಒರ್ವರೂ ಇಲ್ಲ ಆತನನ್ನು ಅರಸುವವರಂತೂ ಇಲ್ಲವೇ ಇಲ್ಲ.</verse>
				<verse number="12">ಸರಿದರು ದೂರ, ದೇವರಿಂದ ದೂರ ದಾರಿತಪ್ಪಿ ನಡೆದರೆಲ್ಲರೂ ಬಲುದೂರ ಒಳಿತನು ಮಾಳ್ಪರೊರ್ವನೂ ಇಲ್ಲ.</verse>
				<verse number="13">ಅವರ ಗಂಟಲೇ ತೆರೆದ ಸಮಾಧಿಯಾಗಿದೆ ನಾಲಗೆಗಳಲಿ ಮರೆಮೋಸ ತುಂಬಿತುಳುಕುತಿದೆ. ತುಟಿಯ ಕಂಪನದಲಿ ಘೋರ ವಿಷವಿದೆ.</verse>
				<verse number="14">ಶಾಪಕೋಪ ಅವರ ಬಾಯಲಿ ತುಂಬಿದೆ</verse>
				<verse number="15">ಕಾಲುಕೆರೆದು ನಿಂತಿಹರು ರಕುತ ಪಾತಕೆ</verse>
				<verse number="16">ನಾಶಪರಿವಿನಾಶ ಅವರು ಹೋದೆಡೆ.</verse>
				<verse number="17">ಶಾಂತಿಪಥವನು ಅರಿಯರವರು</verse>
				<verse number="18">ಅವರೆದೆಯಲಿಲ್ಲ ದೇವಭಯವು.</verse>
				<verse number="19">ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.</verse>
				<verse number="20">ಏಕೆಂದರೆ, ಈ ನೇಮನಿಯಮಗಳನ್ನು ಅನುಸರಿಸಿದ ಮಾತ್ರಕ್ಕೇ ಯಾರೂ ದೇವರೊಡನೆ ಸತ್ಸಂಬಂಧವನ್ನು ಪಡೆಯುವುದಿಲ್ಲ. ಧರ್ಮಶಾಸ್ತ್ರ ಮಾನವನಿಗೆ ಪಾಪಪ್ರಜ್ಞೆಯನ್ನು ಉಂಟುಮಾಡುತ್ತದೆ, ಅಷ್ಟೆ.</verse>
				<verse number="21">ಈಗಲಾದರೋ ಧರ್ಮಶಾಸ್ತ್ರದ ನೆರವಿಲ್ಲದೆಯೇ ದೇವರಿಂದ ದೊರಕುವ ಸತ್ಸಂಬಂಧವು ಪ್ರಕಟವಾಗಿದೆ. ಇದಕ್ಕೆ ಧರ್ಮಶಾಸ್ತ್ರವೂ ಪ್ರವಾದನಾಗ್ರಂಥವೂ ಸಾಕ್ಷಿಯಾಗಿವೆ.</verse>
				<verse number="22">ಯೇಸುಕ್ರಿಸ್ತರಲ್ಲಿ ವಿಶ್ವಾಸವಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರನ್ನೂ ದೇವರು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.</verse>
				<verse number="23">ಮಾನವರೆಲ್ಲರೂ ಪಾಪಿಗಳೇ, ಎಲ್ಲರೂ ದೇವದತ್ತ ಮಹಿಮೆಯನ್ನು ಕಳೆದುಕೊಂಡವರೇ.</verse>
				<verse number="24">ಆದರೆ ದೇವರು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಪಾಪವಿಮೋಚನೆಯನ್ನು ದಯಪಾಲಿಸಿ, ತಮ್ಮ ಉಚಿತಾರ್ಥ ಅನುಗ್ರಹದಿಂದ ಅವರನ್ನು ತಮ್ಮ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ.</verse>
				<verse number="25">ಪೂರ್ವಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ವಿಶ್ವಾಸವುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತರು ರಕ್ತಧಾರೆ ಎರೆಯುವಂತೆ ಮಾಡಿದರು. ತಾವು ನೀತಿಸ್ವರೂಪರೆಂದು ತೋರಿಸುವುದಕ್ಕಾಗಿ ಹೀಗೆ ಮಾಡಿದರು.</verse>
				<verse number="26">ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯೂ ತಾವು ಸತ್ಯಸ್ವರೂಪರು ಮತ್ತು ನ್ಯಾಯವಂತರು ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಈ ರೀತಿ ಮಾಡಿದರು.</verse>
				<verse number="27">ಹೀಗಿರುವಲ್ಲಿ ಮಾನವನು ಕೊಚ್ಚಿಕೊಳ್ಳುವುದಕ್ಕೆ ಆಸ್ಪದವಿದೆಯೆ? ಇಲ್ಲವೇ ಇಲ್ಲ. ಹಾಗಾದರೆ ಸತ್ಸಂಬಂಧಕ್ಕೆ ಆಧಾರವೇನು? ಸತ್ಕಾರ್ಯಗಳ ಸಾಧನೆಯೆ? ಇಲ್ಲ. ವಿಶ್ವಾಸವೇ? ಹೌದು.</verse>
				<verse number="28">ಮಾನವನಿಗೆ ದೇವರೊಡನೆ ಸತ್ಸಂಬಂಧ ದೊರಕುವುದು ಧರ್ಮಶಾಸ್ತ್ರಗಳ ನೇಮನಿಯಮಗಳನ್ನು ಪಾಲಿಸುವುದರಿಂದ ಅಲ್ಲ, ವಿಶ್ವಾಸದಿಂದಲೇ ಎಂಬುದು ನಮ್ಮ ಸಿದ್ಧಾಂತ.</verse>
				<verse number="29">ದೇವರು ಕೇವಲ ಯೆಹೂದ್ಯರಿಗೆ ಮಾತ್ರ ದೇವರೋ ಅಥವಾ ಇತರರಿಗೂ ದೇವರೋ? ಹೌದು, ಇತರರಿಗೂ ದೇವರೇ.</verse>
				<verse number="30">ಯೆಹೂದ್ಯರನ್ನು ಅವರ ವಿಶ್ವಾಸದ ಆಧಾರದ ಮೇಲೂ ಇತರರನ್ನು ಅವರ ವಿಶ್ವಾಸದ ಮೂಲಕವೂ ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವ ದೇವರು ಒಬ್ಬರೇ.</verse>
				<verse number="31">‘ವಿಶ್ವಾಸದ ಮೂಲಕ’ ಎಂದು ಒತ್ತಿ ಹೇಳುವಾಗ ಧರ್ಮಶಾಸ್ತ್ರವನ್ನು ನಾವು ಅಲ್ಲಗಳೆಯುತ್ತೇವೆಂದು ಅರ್ಥವೆ? ಎಂದಿಗೂ ಇಲ್ಲ. ಬದಲಿಗೆ ಧರ್ಮಶಾಸ್ತ್ರದ ನಿಲುವನ್ನು ಸಮರ್ಥಿಸುತ್ತೇವೆ.</verse>
			</chapter>
			<chapter number="4">
				<verse number="1">ಹಾಗಾದರೆ, ವಂಶಾನುಕ್ರಮವಾಗಿ ನಮ್ಮ ಮೂಲಪಿತನಾದ ಅಬ್ರಹಾಮನ ಅನುಭವವನ್ನು ಕುರಿತು ಏನು ಹೇಳೋಣ?</verse>
				<verse number="2">ಆತನು ತನ್ನ ಸತ್ಕಾರ್ಯಗಳಿಂದ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರೆ ಆಗ ಹೊಗಳಿಕ್ಕೊಳ್ಳುವುದಕ್ಕೆ ಆತನಿಗೆ ಆಸ್ಪದವಿರುತ್ತಿತ್ತು; ಆದರೆ ಅದು ದೇವರ ಸಾನ್ನಿಧ್ಯದಲ್ಲಿ ಅಲ್ಲ.</verse>
				<verse number="3">ಏಕೆಂದರೆ, ಪವಿತ್ರಗ್ರಂಥದಲ್ಲಿ ಹೀಗೆ ಹೇಳಿದೆ: “ಅಬ್ರಹಾಮನು ದೇವರಲ್ಲಿ ವಿಶ್ವಾಸವಿಟ್ಟನು; ಆತನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ದೇವರು ಪರಿಗಣಿಸಿದರು.”</verse>
				<verse number="4">ದುಡಿಯುವವನಿಗೆ ದೊರಕುವ ಕೂಲಿ ಉಚಿತ ದಾನವಲ್ಲ; ಅದು ಅವನ ಕಷ್ಟಾರ್ಜಿತ ಸಂಪಾದನೆ.</verse>
				<verse number="5">ಆದರೆ ಸತ್ಕಾರ್ಯಸಂಪಾದನೆ ಇಲ್ಲದಿದ್ದರೂ ಯಾರು, ಅಧರ್ಮಿಗಳನ್ನು ಸದ್ಧರ್ಮಿಗಳನ್ನಾಗಿಸುವ ದೇವರಲ್ಲಿ ವಿಶ್ವಾಸವಿಡುತ್ತಾರೋ ಅಂಥವರ ವಿಶ್ವಾಸವನ್ನು ದೇವರು ಅಂಗೀಕರಿಸಿ, ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ.</verse>
				<verse number="6">ಅಂತೆಯೇ ಸತ್ಕಾರ್ಯಸಂಪಾದನೆ ಇಲ್ಲದಿದ್ದರೂ ಯಾರು ದೇವರೊಡನೆ ಸತ್ಸಂಬಂಧದಲ್ಲಿ ಇರುತ್ತಾರೋ ಅಂಥವರು ಭಾಗ್ಯವಂತರು! ಇದನ್ನು ಕುರಿತು ದಾವೀದನು ಹೀಗೆನ್ನುತ್ತಾನೆ:</verse>
				<verse number="7">“ಯಾರ ಅಪರಾಧಗಳು ಪರಿಹರಿಸಲಾಗಿವೆಯೋ ಯಾರ ಪಾಪಗಳು ಕ್ಷಮಿಸಲಾಗಿವೆಯೋ ಅವರು ಭಾಗ್ಯವಂತರು!</verse>
				<verse number="8">ಯಾರ ಪಾಪವನ್ನು ಸರ್ವೇಶ್ವರ ಲೆಕ್ಕಿಸುವುದಿಲ್ಲವೋ ಆತನು ಭಾಗ್ಯವಂತನು!”</verse>
				<verse number="9">ಈ ಆಶೀರ್ವಚನವು ಸುನ್ನತಿ ಮಾಡಿಸಿಕೊಂಡವರಿಗೆ ಮಾತ್ರ ಅನ್ವಯಿಸುತ್ತದೆಯೇ? ಇಲ್ಲ, ಸುನ್ನತಿ ಮಾಡಿಸಿಕೊಳ್ಳದವರಿಗೂ ಅನ್ವಯಿಸುತ್ತದೆ. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಅಬ್ರಹಾಮನು ದೇವರಲ್ಲಿ ವಿಶ್ವಾಸವಿಟ್ಟನು; ದೇವರು ಆತನನ್ನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು.”</verse>
				<verse number="10">ಹೀಗೆ ಪರಿಗಣಿಸಿದ್ದು ಯಾವಾಗ? ಅಬ್ರಹಾಮನಿಗೆ ಸುನ್ನತಿ ಆಗುವುದಕ್ಕೆ ಮೊದಲೋ ಅಥವಾ ಅನಂತರವೊ? ಆತನು ಸುನ್ನತಿ ಮಾಡಿಸಿಕೊಳ್ಳುವ ಮೊದಲೇ ಹೀಗೆ ಪರಿಗಣಿಸಲಾಯಿತು; ಸುನ್ನತಿಮಾಡಿಸಿಕೊಂಡ ನಂತರವಲ್ಲ.</verse>
				<verse number="11">ತಾನು ಸುನ್ನತಿಮಾಡಿಸಿಕೊಳ್ಳುವ ಮೊದಲೇ ಅಬ್ರಹಾಮನು ಇಟ್ಟ ವಿಶ್ವಾಸದಿಂದಾಗಿ ದೇವರು ಆತನನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡರು. ಅನಂತರವೇ ಆತನು ಸುನ್ನತಿಯನ್ನು ಗುರುತಾಗಿಯೂ ಮುದ್ರೆಯನ್ನಾಗಿಯೂ ಪಡೆದನು. ಹೀಗೆ, ಸುನ್ನತಿ ಮಾಡಿಸಿಕೊಳ್ಳದಿದ್ದರೂ ವಿಶ್ವಾಸಿಸುವ ಎಲ್ಲರಿಗೆ ದೇವರೊಡನೆ ಸತ್ಸಂಬಂಧ ದೊರಕುವಂತೆ ಅಬ್ರಹಾಮನು ಮೂಲಪಿತನಾದನು.</verse>
				<verse number="12">ಸುನ್ನತಿ ಮಾಡಿಸಿಕೊಂಡವರಿಗೆ ಅಬ್ರಹಾಮನು ಮೂಲಪಿತನಾಗಿರುವುದು ಕೇವಲ ಸುನ್ನತಿ ಪಡೆದುದರ ಕಾರಣದಿಂದಲ್ಲ. ಆದರೆ ಅವರು ಸುನ್ನತಿಮಾಡಿಸಿಕೊಳ್ಳುವ ಮೊದಲೇ ಆತನು ಕೈಗೊಂಡ ವಿಶ್ವಾಸಮಾರ್ಗವನ್ನು ಅನುಸರಿಸಿದ್ದರಿಂದ.</verse>
				<verse number="13">ಅಬ್ರಹಾಮನಿಗೂ ಆತನ ಸಂತತಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದರು. ಈ ವಾಗ್ದಾನವನ್ನು ಅಬ್ರಹಾಮನು ಪಡೆದದ್ದು ಧರ್ಮಶಾಸ್ತ್ರದ ಪಾಲನೆಯಿಂದ ಅಲ್ಲ, ಆದರೆ ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರಿಂದ.</verse>
				<verse number="14">ಧರ್ಮಶಾಸ್ತ್ರವನ್ನು ಪಾಲಿಸುವುದರಿಂದ ಮಾತ್ರ ದೇವರ ವಾಗ್ದಾನಕ್ಕೆ ಬಾಧ್ಯತೆ ದೊರಕುವುದಾದರೆ, ಮಾನವನ ವಿಶ್ವಾಸವೂ ವ್ಯರ್ಥ; ದೇವರ ವಾಗ್ದಾನವೂ ನಿರರ್ಥಕ.</verse>
				<verse number="15">ಧರ್ಮಶಾಸ್ತ್ರವು ದೇವರ ಕೋಪವನ್ನು ಬರಮಾಡುತ್ತದೆ. ಧರ್ಮಶಾಸ್ತ್ರವೇ ಇಲ್ಲದೆಹೋಗಿದ್ದರೆ ಅದರ ಉಲ್ಲಂಘನೆಯೂ ಇರುತ್ತಿರಲಿಲ್ಲ.</verse>
				<verse number="16">ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸ ಇಟ್ಟವರೆಲ್ಲರಿಗೂ ಖಚಿತವಾಗಿ ದೊರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ.</verse>
				<verse number="17">“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತನನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ. ಹೌದು, ಮೃತರನ್ನು ಜೀವಂತಗೊಳಿಸುವವರೂ ಅಸ್ತಿತ್ವದಲ್ಲಿ ಇಲ್ಲದ್ದನ್ನು ಅಸ್ತಿತ್ವಕ್ಕೆ ತರುವಂಥವರೂ ಆದ ದೇವರಲ್ಲಿ ಆತನು ವಿಶ್ವಾಸವಿಟ್ಟನು. ಆದ್ದರಿಂದ ಈ ವಾಗ್ದಾನವನ್ನು ಸಾಕ್ಷಾತ್ ದೇವರಿಂದಲೇ ಪಡೆದನು.</verse>
				<verse number="18">ಆತನ ವಿಶ್ವಾಸ ಮತ್ತು ಭರವಸೆ ಎಷ್ಟರಮಟ್ಟಿಗೆ ಇತ್ತೆಂದರೆ, ಈ ದೈವವಾಗ್ದಾನವು ನೆರವೇರುವ ನಿರೀಕ್ಷೆ ಇಲ್ಲದಿದ್ದರೂ ಆತನು ದೇವರನ್ನು ನಂಬಿದನು. ಆದುದರಿಂದಲೇ, “ನಿನ್ನ ಸಂತಾನವು ನಕ್ಷತ್ರಗಳಷ್ಟು ಅಸಂಖ್ಯಾತ ಆಗುವುದು,” ಎಂಬ ಹೇಳಿಕೆಯಂತೆ ಆತನು ಅನೇಕ ಜನಾಂಗಗಳಿಗೆ ಮೂಲಪಿತನಾದನು.</verse>
				<verse number="19">ಆಗ ಆತನಿಗೆ ಹೆಚ್ಚುಕಡಿಮೆ ನೂರು ವರ್ಷ ಪ್ರಾಯವಾಗಿತ್ತು. ಆತನ ದೇಹವು ದುರ್ಬಲವಾಗಿತ್ತು. ಸಾರಳಿಗೆ ಗರ್ಭಕಾಲವು ಕಳೆದುಹೋಗಿತ್ತು. ಆದರೂ ಆತನ ವಿಶ್ವಾಸ ಕುಂದಲೇ ಇಲ್ಲ.</verse>
				<verse number="20">ದೇವರ ವಾಗ್ದಾನದಲ್ಲಿ ಆತನು ಸಂಶಯಪಡಲಿಲ್ಲ. ಅಪನಂಬಿಕೆಯಿಂದ ಚಂಚಲಚಿತ್ತನಾಗಲೂ ಇಲ್ಲ. ಬದಲಾಗಿ ಆತನ ವಿಶ್ವಾಸ ವೃದ್ಧಿಯಾಯಿತು. ಆತನು ದೇವರನ್ನು ಹೊಗಳಿ ಕೊಂಡಾಡಿದನು.</verse>
				<verse number="21">ದೇವರು ತಾವು ವಾಗ್ದಾನ ಮಾಡಿದ್ದನ್ನು ಖಂಡಿತವಾಗಿಯೂ ನೆರವೇರಿಸಬಲ್ಲರೆಂದು ದೃಢವಾಗಿ ನಂಬಿದನು.</verse>
				<verse number="22">ಆದ್ದರಿಂದಲೇ, “ದೇವರು ಆತನನ್ನು ತಮ್ಮೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು,” ಎಂದು ಲಿಖಿತವಾಗಿದೆ.</verse>
				<verse number="23">;ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು’ ಎಂಬ ಮಾತು ಆತನಿಗೆ ಮಾತ್ರವಲ್ಲ, ನಮಗೂ ಅನ್ವಯಿಸುತ್ತದೆ.</verse>
				<verse number="24">ನಮ್ಮ ಪ್ರಭುವಾದ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರನ್ನು ವಿಶ್ವಾಸಿಸುವ ನಾವು ಸಹ ಅವರೊಂದಿಗೆ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿತರಾಗುತ್ತೇವೆ.</verse>
				<verse number="25">ನಮ್ಮ ಪಾಪಗಳ ನಿಮಿತ್ತ ಯೇಸುವನ್ನು ಮರಣಕ್ಕೆ ಗುರಿಪಡಿಸಲಾಯಿತು. ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿ ಇರಿಸುವುದಕ್ಕಾಗಿ ಅವರು ಪುನರುತ್ಥಾನ ಹೊಂದಿದರು.</verse>
			</chapter>
			<chapter number="5">
				<verse number="1">ಹೀಗಿರಲಾಗಿ, ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧದಲ್ಲಿರುವ ನಾವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರೊಡನೆ ಶಾಂತಿಸಮಾಧಾನದಿಂದಿರುತ್ತೇವೆ.</verse>
				<verse number="2">ವಿಶ್ವಾಸದ ಮೂಲಕ ನಾವು ದೈವಾನುಗ್ರಹವನ್ನು ಸವಿಯುವಂತೆ ಯೇಸುಕ್ರಿಸ್ತರು ದಾರಿ ತೋರಿಸಿದರು. ನಾವೀಗ ನೆಲೆಗೊಂಡಿರುವುದು ಆ ಅನುಗ್ರಹದಲ್ಲಿಯೇ. ಆದ್ದರಿಂದಲೇ, ದೇವರ ಮಹಿಮೆಯಲ್ಲಿ ನಾವೂ ಪಾಲುಗೊಳ್ಳುತ್ತೇವೆಂಬ ಭರವಸೆಯಿಂದ ಹೆಮ್ಮೆಪಡುತ್ತೇವೆ.</verse>
				<verse number="3">ಅಷ್ಟೇ ಅಲ್ಲ, ನಮಗೆ ಬಂದೊದಗುವ ಕಷ್ಟಸಂಕಟಗಳಲ್ಲೂ ಹೆಮ್ಮೆಪಡುತ್ತೇವೆ. ಏಕೆಂದರೆ, ಕಷ್ಟಸಂಕಟಗಳು ಸಹನೆಯನ್ನು,</verse>
				<verse number="4">ಸಹನೆಯು ಸದ್ಗುಣವನ್ನು, ಸದ್ಗುಣವು ನಂಬಿಕೆನಿರೀಕ್ಷೆಯನ್ನು ಬೆಳೆಸುತ್ತವೆಂದು ನಾವು ಬಲ್ಲೆವು.</verse>
				<verse number="5">ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.</verse>
				<verse number="6">ನಾವು ಪಾಪದಿಂದ ದುರ್ಬಲರಾಗಿದ್ದಾಗಲೇ ನಿಯಮಿತ ಕಾಲದಲ್ಲಿ ಕ್ರಿಸ್ತಯೇಸು ಪಾಪಿಗಳಿಗೋಸ್ಕರ ಪ್ರಾಣತ್ಯಾಗಮಾಡಿದರು.</verse>
				<verse number="7">ನೀತಿವಂತನಿಗಾಗಿ ಒಬ್ಬನು ತನ್ನ ಪ್ರಾಣಕೊಡುವುದು ವಿರಳ. ಸತ್ಪುರುಷನಿಗಾಗಿ ಒಬ್ಬನು ತನ್ನ ಪ್ರಾಣವನ್ನು ಕೊಟ್ಟರೂ ಕೊಟ್ಟಾನು.</verse>
				<verse number="8">ಆದರೆ ನಾವಿನ್ನೂ ಪಾಪಿಗಳಾಗಿರುವಾಗಲೇ ಕ್ರಿಸ್ತಯೇಸು ನಮಗೋಸ್ಕರ ಪ್ರಾಣತ್ಯಾಗ ಮಾಡಿದರು. ಇದರಿಂದ ನಮ್ಮ ಮೇಲೆ ದೇವರಿಗಿರುವ ಪ್ರೀತಿ ಎಷ್ಟೆಂದು ವ್ಯಕ್ತವಾಗುತ್ತದೆ.</verse>
				<verse number="9">ಕ್ರಿಸ್ತಯೇಸುವಿನ ರಕ್ತಧಾರೆಯಿಂದ ನಾವೀಗ ದೇವರೊಡನೆ ಸತ್ಸಂಬಂಧದಲ್ಲಿದ್ದೇವೆ. ಹೀಗಿರಲಾಗಿ, ಬರಲಿರುವ ದೈವಕೋಪಾಗ್ನಿಯಿಂದ ಯೇಸುಕ್ರಿಸ್ತರ ಮುಖಾಂತರವೇ ಪಾರಾಗುತ್ತೇವೆ ಎಂಬುದು ಮತ್ತಷ್ಟು ನಿಶ್ಚಯವಲ್ಲವೆ?</verse>
				<verse number="10">ನಾವು ದೇವರಿಗೆ ಶತ್ರುಗಳಾಗಿದ್ದರೂ ಅವರು ತಮ್ಮ ಮಗನ ಮರಣದ ಮೂಲಕ ನಮ್ಮನ್ನು ತಮ್ಮೊಡನೆ ಸಂಧಾನಗೊಳಿಸಿ ಮಿತ್ರರನ್ನಾಗಿ ಮಾಡಿಕೊಂಡರು. ನಾವೀಗ ದೇವರ ಮಿತ್ರರಾಗಿರುವುದರಿಂದ, ಕ್ರಿಸ್ತಯೇಸುವಿನ ಜೀವದ ಮೂಲಕ ಉದ್ಧಾರ ಹೊಂದುತ್ತೇವೆ ಎಂಬುದು ಮತ್ತಷ್ಟು ಖಚಿತವಲ್ಲವೆ?</verse>
				<verse number="11">ಅಷ್ಟೇ ಅಲ್ಲದೆ, ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ದೇವರು ನಮ್ಮನ್ನು ಮಿತ್ರರನ್ನಾಗಿಸಿರುವುದರಿಂದ ಅವರ ಮೂಲಕವೇ ನಾವು ದೇವರಲ್ಲಿ ಹೆಮ್ಮೆಪಡುತ್ತೇವೆ.</verse>
				<verse number="12">ಒಬ್ಬ ಮನುಷ್ಯನಿಂದಲೇ ಪಾಪ, ಪಾಪದಿಂದ ಮರಣ, ಈ ಲೋಕವನ್ನು ಪ್ರವೇಶಿಸಿದವು. ಎಲ್ಲರೂ ಪಾಪಮಾಡಿದ್ದರಿಂದ ಮರಣವು ಎಲ್ಲರಿಗೂ ಪ್ರಾಪ್ತಿಯಾಯಿತು.</verse>
				<verse number="13">ಧರ್ಮಶಾಸ್ತ್ರವನ್ನು ಕೊಡುವುದಕ್ಕೆ ಮೊದಲೇ ಪಾಪವು ಲೋಕದಲ್ಲಿತ್ತು. ಆದರೆ ಧರ್ಮಶಾಸ್ತ್ರ ಇಲ್ಲದೆ ಇದ್ದುದರಿಂದ ಪಾಪವನ್ನು ಗಣನೆಗೆ ತಂದುಕೊಳ್ಳಲಾಗಲಿಲ್ಲ.</verse>
				<verse number="14">ಆದರೂ, ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣವು ದಬ್ಬಾಳಿಕೆ ನಡೆಸುತ್ತಿತ್ತು. ದೇವರ ಆಜ್ಞಾವಿಧಿಗಳನ್ನು ಮೀರಿ ಆದಾಮನು ಮಾಡಿದ ಪಾಪಕ್ಕೆ ಸಮನಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ, ಮರಣದ ಆಳ್ವಿಕೆ ನಡೆಯುತ್ತಿತ್ತು. ಆದಾಮನು ಮುಂಬರಲಿದ್ದ ಮಹಾತ್ಮನ ಮುನ್ಸೂಚನೆಯಾಗಿದ್ದಾನೆ.</verse>
				<verse number="15">ಆದರೆ ಆದಾಮನ ಪಾಪಕ್ಕೂ ದೇವರ ಅನುಗ್ರಹಕ್ಕೂ ವ್ಯತ್ಯಾಸವಿದೆ. ಒಬ್ಬ ಮನುಷ್ಯನ ಅಪರಾಧದಿಂದ ಎಲ್ಲರೂ ಮರಣಕ್ಕೊಳಗಾದರು ಎಂಬುದೇನೋ ನಿಜ. ಆದರೆ ದೇವರ ಅನುಗ್ರಹವು ಅದಕ್ಕಿಂತಲೂ ಅತ್ಯಧಿಕವಾದುದು. ಅಂತೆಯೇ, ಯೇಸುಕ್ರಿಸ್ತ ಎಂಬ ಒಬ್ಬ ಮಹಾತ್ಮನ ಅನುಗ್ರಹದಿಂದ ಲಭಿಸುವ ಉಚಿತಾರ್ಥವರಗಳು ಇನ್ನೂ ಅಧಿಕಾಧಿಕವಾದುವು ಎಂಬುದೂ ನಿಜ.</verse>
				<verse number="16">ದೇವರ ಉಚಿತಾರ್ಥವರಕ್ಕೂ ಒಬ್ಬ ಮನುಷ್ಯನ ಪಾಪದ ಪರಿಣಾಮಕ್ಕೂ ಎಷ್ಟೋ ವ್ಯತ್ಯಾಸವಿದೆ. ಆ ಒಂದು ಪಾಪದ ಪರಿಣಾಮವಾಗಿ ಮನುಷ್ಯನು ಅಪರಾಧಿಯೆಂದು ನಿರ್ಣಯಿಸಲ್ಪಟ್ಟನು. ಆದರೆ ಅನೇಕರು ಅಪರಾಧಿಗಳಾದ ಮೇಲೂ ಕೊಡಲಾಗುವ ಉಚಿತಾರ್ಥ ವರವು ದೇವರೊಡನೆ ಸತ್ಸಂಬಂಧವನ್ನು ಉಂಟುಮಾಡುತ್ತದೆ.</verse>
				<verse number="17">ಒಬ್ಬ ಮನುಷ್ಯನ ಅಪರಾಧದ ಕಾರಣ, ಒಬ್ಬ ವ್ಯಕ್ತಿಯ ಮುಖಾಂತರ ಮರಣವು ಎಲ್ಲಾ ಮಾನವರ ಮೇಲೆ ದಬ್ಬಾಳಿಕೆ ನಡೆಸಿತು. ಆದರೆ, ಹೇರಳವಾದ ದೈವಾನುಗ್ರಹವನ್ನೂ ದೇವರೊಡನೆ ಸತ್ಸಂಬಂಧವೆಂಬ ಉಚಿತಾರ್ಥ ವರವನ್ನೂ ಪಡೆದವರಾದರೋ ಯೇಸುಕ್ರಿಸ್ತ ಎಂಬ ಮಹಾತ್ಮನ ಮುಖಾಂತರ ಮತ್ತಷ್ಟು ವಿಪುಲವಾಗಿ ಸಜ್ಜೀವವನ್ನು ಪಡೆದು ರಾಜ್ಯವಾಳುತ್ತಾರೆ.</verse>
				<verse number="18">ಒಬ್ಬನ ಅಪರಾಧದಿಂದ ಎಲ್ಲಾ ಮಾನವರು ದಂಡನೆಯ ತೀರ್ಪಿಗೆ ಗುರಿಯಾಗುತ್ತಾರೆ. ಹಾಗೆಯೇ ಒಬ್ಬನ ಸತ್ಕಾರ್ಯದಿಂದ ಎಲ್ಲಾ ಮಾನವರು ವಿಮೋಚನೆಯನ್ನೂ ಸಜ್ಜೀವವನ್ನೂ ಪಡೆಯುತ್ತಾರೆ.</verse>
				<verse number="19">ಹೇಗೆ ಒಬ್ಬ ಮನುಷ್ಯನ ಅವಿಧೇಯತೆಯಿಂದ ಎಲ್ಲರೂ ಪಾಪಿಗಳಾದರೋ, ಹಾಗೆಯೇ ಒಬ್ಬ ಮನುಷ್ಯನ ವಿಧೇಯತೆಯಿಂದ ಎಲ್ಲರೂ ದೇವರೊಡನೆ ಸತ್ಸಂಬಂಧವನ್ನು ಹೊಂದುತ್ತಾರೆ.</verse>
				<verse number="20">ಧರ್ಮಶಾಸ್ತ್ರದ ಪ್ರವೇಶ ಆದಂತೆ, ಅಪರಾಧಗಳು ಹೆಚ್ಚಿದವು. ಅಪರಾಧಗಳು ಹೆಚ್ಚಿದಂತೆ, ದೇವರ ಅನುಗ್ರಹವು ಹೆಚ್ಚುಹೆಚ್ಚು ಆಯಿತು.</verse>
				<verse number="21">ಹೀಗೆ ಪಾಪವು ಮರಣದ ಮೂಲಕ ಆಳ್ವಿಕೆ ನಡೆಸಿದಂತೆ, ದೈವಾನುಗ್ರಹವು ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ನಮ್ಮನ್ನು ದೇವರೊಡನೆ ಸತ್ಸಂಬಂಧದಲ್ಲಿರಿಸಿ, ಅಮರಜೀವದತ್ತ ಒಯ್ದು, ಆಳ್ವಿಕೆ ನಡೆಸುತ್ತದೆ.</verse>
			</chapter>
			<chapter number="6">
				<verse number="1">ಹಾಗಾದರೆ ನಾವು ಏನು ಹೇಳೋಣ? ದೈವಾನುಗ್ರಹವು ಹೆಚ್ಚುವಂತೆ ನಾವು ಪಾಪದಲ್ಲೇ ನೆಲೆಗೊಂಡು ಇರೋಣವೇ?</verse>
				<verse number="2">ಖಂಡಿತವಾಗಿಯೂ ಕೂಡದು. ಪಾಪದ ಪಾಲಿಗೆ ಸತ್ತಿರುವ ನಾವು ಅದರಲ್ಲೇ ಜೀವಿಸುವುದು ಹೇಗೆ ತಾನೆ ಸಾಧ್ಯ?</verse>
				<verse number="3">ಕ್ರಿಸ್ತಯೇಸುವಿನವರಾಗಲು ದೀಕ್ಷಾಸ್ನಾನ ಹೊಂದಿರುವ ನಾವು, ಅವರ ಮರಣದಲ್ಲಿ ಪಾಲುಗಾರರಾಗಲು ದೀಕ್ಷಾಸ್ನಾನ ಪಡೆದೆವು ಎಂಬುದು ನಿಮಗೆ ತಿಳಿಯದೆ?</verse>
				<verse number="4">ಹೀಗಿರಲಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡಾಗ ಅವರ ಮರಣದಲ್ಲಿ ಪಾಲುಗಾರರಾದ ನಮಗೆ ಅವರೊಡನೆ ಸಮಾಧಿಯೂ ಆಯಿತು. ಆದುದರಿಂದ ತಂದೆಯ ಮಹಿಮಾಶಕ್ತಿಯಿಂದ ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದಂತೆಯೇ ನಾವು ಸಹ ಹೊಸಜೀವವನ್ನು ಹೊಂದಿ ಬಾಳುತ್ತೇವೆ.</verse>
				<verse number="5">ಅವರು ಮರಣ ಹೊಂದಿದಂತೆ ನಾವೂ ಅವರೊಂದಿಗೆ ಐಕ್ಯವಾಗಿ ಮರಣವನ್ನು ಹೊಂದುತ್ತೇವೆ. ಅಂತೆಯೇ, ಅವರು ಪುನರುತ್ಥಾನ ಆದಂತೆ ನಾವೂ ಅವರೊಡನೆ ಐಕ್ಯವಾಗಿ ಪುನರುತ್ಥಾನ ಹೊಂದುತ್ತೇವೆ.</verse>
				<verse number="6">ನಮಗೆ ತಿಳಿದಿರುವಂತೆ, ಪಾಪಾಧೀನವಾದ ನಮ್ಮ ಸ್ವಭಾವವು ನಾಶವಾಗುವಂತೆಯೂ ಇನ್ನು ಮುಂದೆ ನಾವು ಪಾಪಕ್ಕೆ ದಾಸರಾಗಿರದಂತೆಯೂ ಯೇಸುಕ್ರಿಸ್ತರೊಡನೆ ನಮ್ಮ ಹಳೆಯ ಸ್ವಭಾವವನ್ನು ಶಿಲುಬೆಗೆ ಜಡಿಯಲಾಗಿದೆ.</verse>
				<verse number="7">ಹೀಗೆ ಸತ್ತವನು ಪಾಪಬಂಧದಿಂದ ಬಿಡುಗಡೆಹೊಂದಿದವನು.</verse>
				<verse number="8">ಕ್ರಿಸ್ತಯೇಸುವಿನೊಂದಿಗೆ ನಾವು ಮರಣ ಹೊಂದಿದ್ದರೆ ಅವರೊಡನೆ ನಾವೂ ಜೀವಿಸುತ್ತೇವೆ; ಇದೇ ನಮ್ಮ ವಿಶ್ವಾಸ.</verse>
				<verse number="9">ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಲಾಯಿತು ಎಂಬುದನ್ನು ನಾವು ಬಲ್ಲೆವು. ಆದ್ದರಿಂದ ಅವರು ಇನ್ನು ಎಂದಿಗೂ ಸಾಯುವುದಿಲ್ಲ; ಸಾವಿಗೆ ಅವರ ಮೇಲೆ ಯಾವ ಅಧಿಕಾರವೂ ಇಲ್ಲ.</verse>
				<verse number="10">ಏಕೆಂದರೆ, ಅವರು ಪಾಪದ ಪಾಲಿಗೆ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ಸತ್ತವರು. ಅವರು ಈಗ ಜೀವಿಸುವುದು ದೇವರಿಗಾಗಿಯೇ.</verse>
				<verse number="11">ಅಂತೆಯೇ ನೀವೂ ಸಹ ಪಾಪದ ಪಾಲಿಗೆ ಸತ್ತವರೆಂದೂ ದೇವರಿಗಾಗಿ ಮಾತ್ರ ಯೇಸುಕ್ರಿಸ್ತರಲ್ಲಿ ಜೀವಿಸುವವರೆಂದೂ ಪರಿಗಣಿಸಿರಿ.</verse>
				<verse number="12">ಆದ್ದರಿಂದ ದೈಹಿಕ ದುರಿಚ್ಛೆಗಳಿಗೆ ದಾಸರಾಗಿ ನೀವು ನಡೆಯದಂತೆ, ನಿಮ್ಮ ನಶ್ವರ ಶರೀರಗಳ ಮೇಲೆ ಪಾಪವು ತನ್ನ ದಬ್ಬಾಳಿಕೆಯನ್ನು ಇನ್ನೆಂದಿಗೂ ನಡೆಸದಿರಲಿ.</verse>
				<verse number="13">ನಿಮ್ಮ ದೇಹದ ಯಾವುದೇ ಅಂಗವು ದುಷ್ಕೃತ್ಯವನ್ನೆಸಗುವ ಸಾಧನವಾಗುವಂತೆ ಪಾಪದ ಕಾರ್ಯಕ್ಕೆ ಅದನ್ನು ಒಪ್ಪಿಸದಿರಿ. ಬದಲಾಗಿ ಸತ್ತು ಜೀವಕ್ಕೆ ಬಂದವರಂತೆ ದೇವರಿಗೆ ನಿಮ್ಮನ್ನೇ ಸಮರ್ಪಿಸಿಕೊಳ್ಳಿರಿ; ನಿಮ್ಮ ಅಂಗಗಳನ್ನು ಸತ್ಕಾರ್ಯ ಸಾಧನಗಳನ್ನಾಗಿ ದೇವರಿಗೆ ಒಪ್ಪಿಸಿಕೊಡಿರಿ.</verse>
				<verse number="14">ಏಕೆಂದರೆ ಪಾಪವು ಇನ್ನೆಂದಿಗೂ ನಿಮ್ಮ ಮೇಲೆ ದಬ್ಬಾಳಿಕೆ ನಡೆಸಲಾಗದು; ನೀವಿನ್ನು ಧರ್ಮಶಾಸ್ತ್ರಕ್ಕೆ ಅಧೀನರಲ್ಲ. ದೈವಾನುಗ್ರಹಕ್ಕೆ ಮಾತ್ರ ಅಧೀನರು.</verse>
				<verse number="15">ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರಕ್ಕೆ ಅಧೀನರಾಗಿರದೆ ದೈವಾನುಗ್ರಹಕ್ಕೆ ಅಧೀನರಾಗಿರುವ ನಾವು ಪಾಪಮಾಡುತ್ತಲೆ ಜೀವಿಸೋಣವೆ? ಸರ್ವಥಾ ಇಲ್ಲ.</verse>
				<verse number="16">ಯಾರ ಕೈಕೆಳಗೆ ಗುಲಾಮರಾಗಿರಲು ನಿಮ್ಮನ್ನೇ ಒಪ್ಪಿಸಿಕೊಳ್ಳುತ್ತೀರೋ ಅವರಿಗೆ ನೀವು ಶರಣಾಗುತ್ತೀರಿ. ನೀವು ಪಾಪಕ್ಕೆ ಗುಲಾಮರಾದರೆ ಮರಣವೇ ನಿಮಗೆ ಗತಿ; ದೇವರಿಗೆ ಶರಣಾದರೆ ಸತ್ಸಂಬಂಧವೇ ಅದರ ಸತ್ಪರಿಣಾಮ.</verse>
				<verse number="17">ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ. ಏಕೆಂದರೆ, ಹಿಂದೊಮ್ಮೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಕಲಿಸಿದ ಬೋಧನೆಯನ್ನು ನೀವು ಮನಃಪೂರ್ವಕವಾಗಿ ಅಂಗೀಕರಿಸಿ ವಿಧೇಯರಾದಿರಿ;</verse>
				<verse number="18">ಪಾಪಬಂಧನದಿಂದ ಬಿಡುಗಡೆ ಹೊಂದಿ ದೇವಸಂಬಂಧಕ್ಕೆ ಒಳಗಾದಿರಿ.</verse>
				<verse number="19">ಇದನ್ನು ಅರ್ಥಮಾಡಿಕೊಳ್ಳಲು ನೀವು ಅಶಕ್ತರಾಗಿರುವುದರಿಂದ ನಾನು ಹೀಗೆ ಸಾಮಾನ್ಯ ರೀತಿಯಲ್ಲಿ ಮಾತನಾಡುತ್ತಿದ್ದೇನೆ. ಹಿಂದೊಮ್ಮೆ ನೀವು ನಿಮ್ಮ ಇಂದ್ರಿಯಗಳನ್ನು ಹೆಚ್ಚುಹೆಚ್ಚಾಗಿ ಅಶ್ಲೀಲತೆಗೂ ಅಕ್ರಮಕ್ಕೂ ಗುಲಾಮರನ್ನಾಗಿಸಿದಿರಿ; ಈಗಲಾದರೋ ಪರಿಶುದ್ಧತೆಗೂ ಸತ್ಸಂಬಂಧಕ್ಕೂ ನಿಮ್ಮ ಇಂದ್ರಿಯಗಳನ್ನು ಅಧೀನರಾಗಿಸಿರಿ.</verse>
				<verse number="20">ನೀವು ಪಾಪಕ್ಕೆ ಗುಲಾಮರಾಗಿದ್ದಾಗ ದೇವಸಂಬಂಧಕ್ಕೆ ಒಳಗಾಗಿರಲಿಲ್ಲ.</verse>
				<verse number="21">ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಂದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯಫಲ.</verse>
				<verse number="22">ಆದರೆ ನೀವು ಪಾಪದಿಂದ ಬಿಡುಗಡೆ ಹೊಂದಿರುವಿರಿ. ದೇವರಿಗೆ ದಾಸರಾಗಿರುವಿರಿ. ಇದರಿಂದ ನಿಮಗೆ ಸಿಕ್ಕಿರುವ ಪ್ರತಿಫಲ ಪರಿಶುದ್ಧಜೀವನ; ಅಂತಿಮವಾಗಿ ಅಮರ ಜೀವನ.</verse>
				<verse number="23">ಮರಣವೇ ಪಾಪದ ವೇತನ; ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ಇರುವ ನಿತ್ಯಜೀವವೇ ದೇವರ ಉಚಿತ ವರದಾನ.</verse>
			</chapter>
			<chapter number="7">
				<verse number="1">ಸಹೋದರರೇ, ಒಬ್ಬ ಮನುಷ್ಯನು ಜೀವದಿಂದಿರುವವರೆಗೆ ಮಾತ್ರ ಧರ್ಮಶಾಸ್ತ್ರದ ನೇಮನಿಯಮಗಳಿಗೆ ಒಳಪಟ್ಟಿರುತ್ತಾನೆ. ಧರ್ಮಶಾಸ್ತ್ರವನ್ನು ಅರಿತಿರುವ ನೀವು ಇದನ್ನು ಗ್ರಹಿಸಿಕೊಳ್ಳಬಲ್ಲಿರಿ.</verse>
				<verse number="2">ಉದಾಹರಣೆಗೆ, ಪತಿಯು ಬದುಕಿರುವವರೆಗೆ ಸತಿ ಅವನಿಗೆ ಶಾಸನಾನುಸಾರವಾಗಿ ಬದ್ಧಳು. ಒಂದು ವೇಳೆ, ಆಕೆಯ ಪತಿ ಸತ್ತುಹೋದರೆ, ಆಕೆ ವಿವಾಹಬಂಧನದಿಂದ ಬಿಡುಗಡೆ ಹೊಂದುತ್ತಾಳೆ.</verse>
				<verse number="3">ಪತಿ ಬದುಕಿರುವಾಗಲೇ ಸತಿಯು ಇನ್ನೊಬ್ಬನೊಡನೆ ಸಂಬಂಧ ಬೆಳೆಸಿದರೆ ಆಕೆ ವ್ಯಭಿಚಾರಿಣಿ ಎನಿಸಿಕೊಳ್ಳುತ್ತಾಳೆ. ಪತಿಯು ಸತ್ತುಹೋದರೆ ಆಕೆ ವಿವಾಹಬಂಧನದಿಂದ ಮುಕ್ತಳು. ಅಂಥವಳು ಇನ್ನೊಬ್ಬನನ್ನು ಮದುವೆ ಆದರೂ ವ್ಯಭಿಚಾರಿಣಿ ಎನಿಸಿಕೊಳ್ಳುವುದಿಲ್ಲ.</verse>
				<verse number="4">ಅಂತೆಯೇ, ಪ್ರಿಯ ಸಹೋದರರೇ, ನೀವು ಕ್ರಿಸ್ತಯೇಸುವಿನ ದೇಹದೊಂದಿಗೆ ಒಂದಾಗಿರುವುದರಿಂದ ಧರ್ಮಶಾಸ್ತ್ರದ ಪಾಲಿಗೆ ಸತ್ತವರಾದಿರಿ. ಇದರ ಪರಿಣಾಮವಾಗಿ, ಮರಣದಿಂದ ಪುನರುತ್ಥಾನ ಹೊಂದಿದ ಕ್ರಿಸ್ತಯೇಸುವಿನೊಂದಿಗೆ ಬಂಧಿತರಾಗಿದ್ದೀರಿ. ಹೀಗೆ, ದೇವರಿಗೆ ನಾವು ಸತ್ಫಲವನ್ನು ಈಯುವವರಾಗಿದ್ದೇವೆ.</verse>
				<verse number="5">ನಾವು ಶರೀರ ಸ್ವಭಾವಕ್ಕನುಸಾರವಾಗಿ ಬಾಳುತ್ತಿದ್ದಾಗ ಪಾಪಕರವಾದ ದುರಿಚ್ಛೆಗಳು ಧರ್ಮಶಾಸ್ತ್ರದಿಂದಲೇ ಪ್ರಚೋದಿತವಾಗಿ ನಮ್ಮ ಇಂದ್ರಿಯಗಳಲ್ಲಿ ಕಾರ್ಯನಿರತವಾಗಿದ್ದವು. ಪರಿಣಾಮವಾಗಿ, ನಾವು ಮೃತ್ಯುವಿಗೆ ಫಲವನ್ನು ಈಯುತ್ತಿದ್ದೆವು.</verse>
				<verse number="6">ಈಗಲಾದರೋ ನಮ್ಮನ್ನು ಬಂಧನದಲ್ಲಿಟ್ಟಿದ್ದ ಆ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತು, ಬಿಡುಗಡೆ ಹೊಂದಿದ್ದೇವೆ. ಆದ್ದರಿಂದ ಲಿಖಿತವಾದ ಹಳೆಯ ಶಾಸ್ತ್ರಕ್ಕೆ ಬದ್ಧರಾಗದೆ ಪವಿತ್ರಾತ್ಮಪ್ರೇರಿತವಾದ ನವೀನ ಮಾರ್ಗದಲ್ಲಿ ನಡೆಯುತ್ತಾ ಇದ್ದೇವೆ.</verse>
				<verse number="7">ಹಾಗಾದರೆ ಧರ್ಮಶಾಸ್ತ್ರವೇ ಪಾಪ ಎಂದು ಹೇಳೋಣವೆ? ಖಂಡಿತವಾಗಿ ಇಲ್ಲ. ಧರ್ಮಶಾಸ್ತ್ರ ಇಲ್ಲದಿದ್ದರೆ ಪಾಪದ ಅರಿವು ನನಗಾಗುತ್ತಿರಲಿಲ್ಲ. ‘ದುರಾಶೆಪಡಬೇಡ’ ಎಂದು ಧರ್ಮಶಾಸ್ತ್ರ ವಿಧಿಸದೆಹೋಗಿದ್ದರೆ ದುರಾಶೆ ಎಂದರೆ ಏನೆಂಬುದೇ ನನಗೆ ತಿಳಿಯುತ್ತಿರಲಿಲ್ಲ.</verse>
				<verse number="8">ಆದರೆ ಈ ಆಜ್ಞೆಯ ಮೂಲಕ ಪಾಪವು ಸಮಯ ಸಾಧಿಸಿ ನನ್ನಲ್ಲಿ ಎಲ್ಲಾ ವಿಧದ ದುರಾಶೆಗಳನ್ನು ಕೆರಳಿಸಿತು. ಧರ್ಮಶಾಸ್ತ್ರವಿಲ್ಲದೆ ಇದ್ದರೆ ಪಾಪವು ಸತ್ತಂತೆಯೇ ಸರಿ.</verse>
				<verse number="9">ಧರ್ಮಶಾಸ್ತ್ರದ ಅರಿವಿಲ್ಲದೆ ಒಮ್ಮೆ ನಾನು ಜೀವಿಸುತ್ತಿದ್ದೆನು; ಆಜ್ಞೆ ಎಂಬುದು ತಲೆದೋರಿದ ಕೂಡಲೇ ಪಾಪಕ್ಕೆ ಜೀವ ಬಂದಿತು.</verse>
				<verse number="10">ನಾನಾದರೋ ಸತ್ತೆನು. ಜೀವದಾಯಕವಾಗಬೇಕಿದ್ದ ಆಜ್ಞೆಯೇ ನನಗೆ ಮೃತ್ಯುಕಾರಕವಾಯಿತು.</verse>
				<verse number="11">ಆಜ್ಞೆಯ ಮೂಲಕವೇ ಪಾಪವು ಸಮಯ ಸಾಧಿಸಿ ನನ್ನನ್ನು ವಂಚಿಸಿತು; ಅದರಿಂದಲೇ ನನ್ನನ್ನು ಕೊಂದುಹಾಕಿತು.</verse>
				<verse number="12">ಧರ್ಮಶಾಸ್ತ್ರ ಪವಿತ್ರವಾದುದು. ಅಂತೆಯೇ, ಆಜ್ಞೆಯೂ ಪವಿತ್ರವಾದುದು. ನ್ಯಾಯವಾದುದು ಮತ್ತು ಹಿತಕರವಾದುದು.</verse>
				<verse number="13">ಹಾಗಾದರೆ ಹಿತಕರವಾದದ್ದೇ ನನಗೆ ಮೃತ್ಯುಕಾರಕವಾಯಿತೇ? ಇಲ್ಲವೇ ಇಲ್ಲ! ಹಾಗೆ ಮೃತ್ಯುಕಾರಕವಾದುದು ಪಾಪವೇ. ತನ್ನ ನಿಜಸ್ವರೂಪವನ್ನು ತೋರಿಸುವುದಕ್ಕಾಗಿ ಪಾಪವು ನನಗೆ ಹಿತಕರವಾದುದನ್ನು ಉಪಯೋಗಿಸಿಕೊಂಡು ನನಗೆ ಮರಣವನ್ನು ತಂದಿತು. ಹೀಗೆ ಪಾಪವು ಅದೆಷ್ಟು ಭೀಕರವಾದುದೆಂದು ಆಜ್ಞೆಯ ಮೂಲಕ ವ್ಯಕ್ತವಾಗುತ್ತದೆ.</verse>
				<verse number="14">ಧರ್ಮಶಾಸ್ತ್ರ ಪಾರಮಾರ್ಥಿಕವಾದುದೆಂದು ನಾವು ಬಲ್ಲೆವು. ನಾನಾದರೋ ನರಮಾನವನು; ಪಾಪಕ್ಕೆ ನನ್ನನ್ನೇ ಗುಲಾಮನನ್ನಾಗಿ ಮಾರಿಕೊಂಡವನು.</verse>
				<verse number="15">ನಾನು ಮಾಡುವುದು ನನಗೇ ಅರ್ಥವಾಗುತ್ತಿಲ್ಲ. ಏನನ್ನು ಮಾಡಲು ಅಪೇಕ್ಷಿಸುತ್ತೇನೋ ಅದನ್ನು ಮಾಡುತ್ತಿಲ್ಲ. ಏನನ್ನು ದ್ವೇಷಿಸುತ್ತೇನೋ ಅದನ್ನೇ ಮಾಡುತ್ತೇನೆ.</verse>
				<verse number="16">ನಾನು ಮಾಡುವುದನ್ನು ಮನಸ್ಸು ಒಪ್ಪದಿದ್ದರೆ, ಧರ್ಮಶಾಸ್ತ್ರ ಸರಿಯಾದುದೆಂದು ನಾನು ಒಪ್ಪಿಕೊಂಡ ಹಾಗಾಯಿತು.</verse>
				<verse number="17">ಹೀಗಿರಲಾಗಿ ನಾನು ಬಯಸದೆ ಇರುವುದನ್ನು ಮಾಡುವವನು ಇನ್ನು ನಾನಲ್ಲ. ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡುತ್ತದೆ.</verse>
				<verse number="18">ನನ್ನಲ್ಲಿ, ಅಂದರೆ ನನ್ನ ಶಾರೀರಿಕ ಸ್ವಭಾವದಲ್ಲಿ ಒಳ್ಳೆಯತನವೆಂಬುದೇನೂ ನೆಲೆಗೊಂಡಿಲ್ಲ. ಇದು ನನಗೆ ಗೊತ್ತು. ಏಕೆಂದರೆ, ಒಳಿತನ್ನು ಮಾಡಬೇಕೆಂಬ ಮನಸ್ಸು ನನಗಿದ್ದರೂ ಅದನ್ನು ಮಾಡಲು ನನ್ನಿಂದ ಆಗುತ್ತಿಲ್ಲ.</verse>
				<verse number="19">ನಾನು ಬಯಸುವ ಒಳ್ಳೆಯದನ್ನು ಮಾಡದೆ, ನಾನು ಬಯಸದ ಕೆಟ್ಟದ್ದನ್ನೇ ಮಾಡುವವನಾಗಿದ್ದೇನೆ.</verse>
				<verse number="20">ನಾನು ಬಯಸದೆ ಇರುವುದನ್ನೇ ಮಾಡಿದರೆ ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿ ನೆಲೆಗೊಂಡಿರುವ ಪಾಪವೇ ಅದನ್ನು ಮಾಡಿತು.</verse>
				<verse number="21">ನಾನು ಒಳಿತನ್ನು ಮಾಡಬಯಸಿದರೂ ಕೇಡು ನನ್ನ ಕೈಬಿಡುತ್ತಿಲ್ಲ. ಇದೇ ಒಂದು ನಿಯಮವಾಗಿ ನನ್ನಲ್ಲಿ ಕಂಡುಬರುತ್ತದೆ.</verse>
				<verse number="22">ನನ್ನ ಅಂತರಂಗದಲ್ಲಿ ದೈವನಿಯಮವನ್ನು ಕುರಿತು ಆನಂದಿಸುತ್ತೇನೆ.</verse>
				<verse number="23">ನನ್ನ ಇಂದ್ರಿಯಗಳಲ್ಲಿಯಾದರೋ ಬೇರೊಂದು ನಿಯಮವನ್ನು ಕಾಣುತ್ತೇನೆ. ಇದು ನನ್ನ ಅಂತರಂಗ ನಿಯಮಕ್ಕೆ ತದ್ವಿರುದ್ಧವಾಗಿ ಕಾದಾಡುತ್ತದೆ; ನನ್ನ ಇಂದ್ರಿಯಗಳಲ್ಲಿ ನೆಲೆಗೊಂಡಿರುವ ಪಾಪನಿಯಮಕ್ಕೆ ನನ್ನನ್ನು ಕೈದಿಯನ್ನಾಗಿಸುತ್ತದೆ.</verse>
				<verse number="24">ಅಯ್ಯೋ, ನಾನೆಂಥ ನಿರ್ಭಾಗ್ಯನು! ಸಾವಿನ ದವಡೆಗೆ ಸಿಕ್ಕಿರುವ ಈ ಶರೀರದಿಂದ ನನ್ನನ್ನು ಬಿಡಿಸುವವರು ಯಾರು?</verse>
				<verse number="25">ದೇವರೇ; ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಅವರಿಗೆ ಕೃತಜ್ಞತೆ ಸಲ್ಲಲಿ! ನನ್ನಷ್ಟಕ್ಕೆ ನಾನೇ ದೇವರ ನಿಯಮವನ್ನು ಮನಃಪೂರ್ವಕವಾಗಿ ಪಾಲಿಸಲು ಬಯಸುತ್ತೇನೆ. ನನ್ನ ಈ ದೇಹದಲ್ಲಾದರೋ ಪಾಪದ ನಿಯಮಕ್ಕೆ ಬದ್ಧನಾಗಿದ್ದೇನೆ.</verse>
			</chapter>
			<chapter number="8">
				<verse number="1">ಆದುದರಿಂದ ಈಗ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.</verse>
				<verse number="2">ಏಕೆಂದರೆ ಕ್ರಿಸ್ತಯೇಸುವಿನಲ್ಲಿ ಇರುವವರಿಗೆ ಜೀವವನ್ನು ತರುವ ಪವಿತ್ರಾತ್ಮ ನಿಯಮವು ಪಾಪ-ಮರಣಗಳ ನಿಯಮದಿಂದ ನಿನ್ನನ್ನು ಬಿಡುಗಡೆ ಮಾಡಿದೆ.</verse>
				<verse number="3">ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.</verse>
				<verse number="4">ಶರೀರ ಸ್ವಭಾವಕ್ಕೆ ಅನುಸಾರವಾಗಿ ನಡೆಯದೆ ಪವಿತ್ರಾತ್ಮ ಅವರ ಚಿತ್ತಕ್ಕನುಸಾರವಾಗಿ ನಡೆಯುವ ನಮ್ಮಲ್ಲಿ ಧರ್ಮಶಾಸ್ತ್ರದ ನೀತಿನಿಯಮಗಳು ನೆರವೇರುವಂತೆ ದೇವರು ಹೀಗೆ ಮಾಡಿದರು.</verse>
				<verse number="5">ಶರೀರ ಸ್ವಭಾವಕ್ಕೆ ಅನುಸಾರವಾಗಿ ನಡೆಯುವವರು ಶರೀರಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಮಗ್ನರಾಗಿರುತ್ತಾರೆ. ಪವಿತ್ರಾತ್ಮ ಅವರಿಗೆ ಅನುಸಾರವಾಗಿ ನಡೆಯುವವರಾದರೋ ಆತ್ಮಕ್ಕೆ ಸಂಬಂಧಪಟ್ಟ ವಿಷಯಗಳಲ್ಲಿ ಮಗ್ನರಾಗಿರುತ್ತಾರೆ.</verse>
				<verse number="6">ಶರೀರ ಸ್ವಭಾವದಲ್ಲೆ ಮಗ್ನರಾಗಿರುವುದರ ಪರಿಣಾಮ ಮರಣ; ಪವಿತ್ರಾತ್ಮ ಅವರಲ್ಲೇ ಮಗ್ನರಾಗಿರುವುದರ ಪರಿಣಾಮ ಸಜ್ಜೀವ ಮತ್ತು ಶಾಂತಿಸಮಾಧಾನ.</verse>
				<verse number="7">ಶರೀರ ಸ್ವಭಾವದಲ್ಲೇ ಮಗ್ನವಾಗಿರುವ ಮನಸ್ಸು ದೇವರಿಗೆ ಶತ್ರು. ಅಂಥ ಮನಸ್ಸು ದೇವರ ನಿಯಮಕ್ಕೆ ಮಣಿಯುವುದಿಲ್ಲ. ಮಣಿಯಲು ಸಾಧ್ಯವೂ ಇಲ್ಲ.</verse>
				<verse number="8">ಶರೀರ ಸ್ವಭಾವಕ್ಕೆ ಅನುಸಾರವಾಗಿ ನಡೆಯುವವರು ದೇವರನ್ನು ಮೆಚ್ಚಿಸಲು ಸಾಧ್ಯವೇ ಇಲ್ಲ</verse>
				<verse number="9">ನಿಮ್ಮಲ್ಲಿ ನಿಜವಾಗಿಯೂ ದೇವರ ಆತ್ಮವು ನೆಲಸಿದ್ದರೆ ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಜೀವಿಸದೆ ಪವಿತ್ರಾತ್ಮ ಅವರ ಚಿತ್ತಕ್ಕೆ ಅನುಸಾರವಾಗಿ ಜೀವಿಸುತ್ತೀರಿ. ಯಾರಲ್ಲಿ ಕ್ರಿಸ್ತಯೇಸುವಿನ ಆತ್ಮ ಇಲ್ಲವೋ ಅಂಥವನು ಕ್ರಿಸ್ತಯೇಸುವಿಗೆ ಸೇರಿದವನಲ್ಲ.</verse>
				<verse number="10">ಆದರೆ ಕ್ರಿಸ್ತಯೇಸು ನಿಮ್ಮಲ್ಲಿ ವಾಸಿಸಿದರೆ, ಪಾಪದ ನಿಮಿತ್ತ ನಿಮ್ಮಶರೀರ ಮರಣಕ್ಕೆ ಗುರಿಯಾಗಿದ್ದರೂ ನೀವು ದೇವರೊಡನೆ ಸತ್ಸಂಬಂಧವನ್ನು ಪಡೆದಿರುವುದರಿಂದ ಪವಿತ್ರಾತ್ಮ ನಿಮಗೆ ಜೀವಾಳವಾಗಿರುತ್ತಾರೆ.</verse>
				<verse number="11">ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರ ಆತ್ಮ ನಿಮ್ಮಲ್ಲಿ ನೆಲೆಗೊಂಡಿರಲಿ. ಆಗ ಕ್ರಿಸ್ತಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ನೆಲೆಗೊಂಡಿರುವ ಆತ್ಮನ ಮುಖಾಂತರ ನಿಮ್ಮ ನಶ್ವರ ದೇಹಗಳಿಗೂ ಜೀವವನ್ನೀಯುವರು.</verse>
				<verse number="12">ಆದ್ದರಿಂದ ಸಹೋದರರೇ, ನಾವು ಶರೀರ ಸ್ವಭಾವದ ಹಂಗಿನಲ್ಲಿಲ್ಲ. ಅದರ ಆಶಾಪಾಶಗಳಿಗೆ ಅನುಗುಣವಾಗಿ ಬಾಳುವ ಹಂಗಿನಲ್ಲೂ ಇಲ್ಲ.</verse>
				<verse number="13">ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಬಾಳಿದರೆ ಖಂಡಿತವಾಗಿ ಸಾಯುವಿರಿ. ಪವಿತ್ರಾತ್ಮ ಅವರ ನೆರವಿನಿಂದ ದೈಹಿಕ ದುರಭ್ಯಾಸಗಳನ್ನು ದಮನಮಾಡಿದರೆ ಜೀವಿಸುವಿರಿ.</verse>
				<verse number="14">ಯಾರು ಯಾರು ದೇವರ ಆತ್ಮನಿಗೆ ಮಣಿದು ನಡೆಯುತ್ತಾರೋ ಅವರು ದೇವರ ಮಕ್ಕಳು.</verse>
				<verse number="15">ದೇವರು ನಿಮಗೆ ದಯಪಾಲಿಸಿರುವ ಆತ್ಮ ನಿಮ್ಮನ್ನು ಮತ್ತೊಮ್ಮೆ ಗುಲಾಮರನ್ನಾಗಿಯೂ ಭಯಭೀತರನ್ನಾಗಿಯೂ ಮಾಡುವುದಿಲ್ಲ. ಬದಲಿಗೆ, ನಿಮ್ಮನ್ನು ದೇವರ ಮಕ್ಕಳನ್ನಾಗಿಸುತ್ತದೆ. ಆ ಆತ್ಮದ ಮೂಲಕವೇ ನಾವು ದೇವರನ್ನು, “ಅಪ್ಪಾ, ತಂದೆಯೇ” ಎಂದು ಕರೆಯುತ್ತೇವೆ.</verse>
				<verse number="16">ನಾವು ದೇವರ ಮಕ್ಕಳೆಂಬುದಕ್ಕೆ ದೇವರ ಆತ್ಮ ನಮ್ಮ ಅಂತರಾತ್ಮದೊಂದಿಗೆ ಸಾಕ್ಷಿ ನುಡಿಯುತ್ತಾರೆ.</verse>
				<verse number="17">ನಾವು ಮಕ್ಕಳಾಗಿದ್ದರೆ, ಹಕ್ಕುಬಾಧ್ಯತೆ ಉಳ್ಳವರು. ಹೌದು, ದೇವರ ಸೌಭಾಗ್ಯಕ್ಕೆ ಬಾಧ್ಯಸ್ಥರು; ಕ್ರಿಸ್ತಯೇಸುವಿನೊಡನೆ ಸಹ ಬಾಧ್ಯಸ್ಥರು. ಕ್ರಿಸ್ತಯೇಸುವಿನ ಯಾತನೆಯಲ್ಲೂ ನಾವು ಪಾಲುಗಾರರಾಗಬೇಕು. ಆಗ ಅವರ ಮಹಿಮೆಯಲ್ಲೂ ಪಾಲುಗಾರರಾಗುತ್ತೇವೆ.</verse>
				<verse number="18">ಇಂದಿನ ಕಾಲದಲ್ಲಿ ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಮುಂದೆ ನಮಗೆ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಹೋಲಿಸುವುದಕ್ಕೂ ಬಾರದವುಗಳೆಂದು ನಾನು ಎಣಿಸುತ್ತೇನೆ.</verse>
				<verse number="19">ದೇವರ ಮಕ್ಕಳ ಮಹಿಮೆಯು ಯಾವಾಗ ಪ್ರತ್ಯಕ್ಷವಾದೀತೋ ಎಂದು ಸೃಷ್ಟಿಸಮಸ್ತವು ಬಹು ಉತ್ಸುಕತೆಯಿಂದ ಎದುರು ನೋಡುತ್ತಿದೆ.</verse>
				<verse number="20">ಸರ್ವಸೃಷ್ಟಿಯು ನಿರರ್ಥಕತೆಗೆ ಒಳಗಾಯಿತು. ಇದು ಅದರ ಸ್ವಂತ ಇಚ್ಛೆಯಿಂದಲ್ಲ. ದೇವರ ಇಚ್ಛೆಯಿಂದಲೇ ಆಯಿತು. ಆದರೂ ಸೃಷ್ಟಿಗೆ ನಿರೀಕ್ಷೆಯೊಂದಿದೆ.</verse>
				<verse number="21">ಅದೇನೆಂದರೆ, ಸೃಷ್ಟಿಯು ಸಹ ವಿನಾಶವಿಧಿಯಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮಾಯುತ ಸ್ವಾತಂತ್ರ್ಯದಲ್ಲಿ ಪಾಲುಗೊಳ್ಳುತ್ತದೆ, ಎಂಬುದೇ.</verse>
				<verse number="22">ಸೃಷ್ಟಿಸಮಸ್ತವು ಇಂದಿನವರೆಗೆ ನರಳುತ್ತಾ ಪ್ರಸವವೇದನೆಪಡುತ್ತಾ ಇದೆ ಎಂಬುದು ನಮಗೆ ತಿಳಿದಿದೆ.</verse>
				<verse number="23">ಸೃಷ್ಟಿಮಾತ್ರವಲ್ಲ, ದೇವರ ವರದಾನಗಳಲ್ಲಿ ಪ್ರಥಮಫಲವಾಗಿ ಪವಿತ್ರಾತ್ಮ ಅವರನ್ನೇ ಪಡೆದಿರುವ ನಾವು ಸಹ ನಮ್ಮೊಳಗೇ ನರಳುತ್ತಿದ್ದೇವೆ. ದೇವರ ಮಕ್ಕಳಿಗೆ ದೊರೆಯುವ ಸೌಭಾಗ್ಯವನ್ನೂ ನಮ್ಮ ಸಂಪೂರ್ಣ ವಿಮೋಚನೆಯನ್ನೂ ನಿರೀಕ್ಷಿಸುತ್ತಿದ್ದೇವೆ.</verse>
				<verse number="24">ನಾವು ಜೀವೋದ್ಧಾರ ಹೊಂದಿದ್ದರೂ ಇನ್ನೂ ನಿರೀಕ್ಷಿಸುವವರಾಗಿದ್ದೇವೆ. ನಾವು ನಿರೀಕ್ಷಿಸುವುದು ಪ್ರತ್ಯಕ್ಷವಾಗಿದ್ದರೆ ಅದನ್ನು ನಿರೀಕ್ಷೆ ಎನ್ನುವುದಿಲ್ಲ; ಪ್ರತ್ಯಕ್ಷವಾಗಿರುವುದನ್ನು ಯಾರಾದರೂ ನಿರೀಕ್ಷಿಸುವುದುಂಟೇ?</verse>
				<verse number="25">ಪ್ರತ್ಯಕ್ಷವಾಗದೆ ಇರುವುದನ್ನು ನಾವು ನಿರೀಕ್ಷಿಸುವವರಾಗಿದ್ದರೆ, ಅದಕ್ಕಾಗಿ ತಾಳ್ಮೆಯಿಂದ ಕಾದುಕೊಂಡಿರುತ್ತೇವೆ.</verse>
				<verse number="26">ಅಂತೆಯೇ ಪವಿತ್ರಾತ್ಮರು ಸಹ ನಮ್ಮ ದೌರ್ಬಲ್ಯದಲ್ಲಿ ನೆರವು ನೀಡುತ್ತಾರೆ. ಹೇಗೆ ಪ್ರಾರ್ಥಿಸಬೇಕು, ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದನ್ನು ನಾವು ತಿಳಿಯದವರು. ಪವಿತ್ರಾತ್ಮರೇ ಮಾತಿಗೆಟುಕದ ರೀತಿಯಲ್ಲಿ ಆತ್ಮಧ್ವನಿಯಿಂದ ನಮ್ಮ ಪರವಾಗಿ ದೇವರಲ್ಲಿ ವಿಜ್ಞಾಪಿಸುತ್ತಾರೆ.</verse>
				<verse number="27">ಅಂತರಂಗಗಳನ್ನು ಈಕ್ಷಿಸುವ ದೇವರು ಪವಿತ್ರಾತ್ಮರ ಇಂಗಿತವೇನೆಂದು ಬಲ್ಲರು. ಏಕೆಂದರೆ, ದೇವರ ಚಿತ್ತದ ಪ್ರಕಾರವೇ ಪವಿತ್ರಾತ್ಮರು ದೇವಜನರಿಗಾಗಿ ಬಿನ್ನವಿಸುತ್ತಾರೆ.</verse>
				<verse number="28">ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.</verse>
				<verse number="29">ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡರೋಅವರನ್ನು ತಮ್ಮ ಪುತ್ರನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದರು. ಹೀಗೆ ಅನೇಕ ಸಹೋದರರಲ್ಲಿ ತಮ್ಮ ಪುತ್ರನೇ ಜೇಷ್ಠನಾಗಿರಬೇಕೆಂಬುದು ದೇವರ ನಿರ್ಧಾರವಾಗಿದೆ.</verse>
				<verse number="30">ಹೀಗೆ ಯಾರನ್ನು ಮೊದಲೇ ನೇಮಿಸಿದ್ದರೋ ಅವರನ್ನು ಕರೆದಿದ್ದಾರೆ. ಯಾರನ್ನು ಕರೆದಿದ್ದಾರೋ ಅವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೆ. ಯಾರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಂಡಿದ್ದಾರೋ ಅವರನ್ನು ಮಹಿಮಾಪದವಿಗೆ ಸೇರಿಸಿಕೊಂಡಿದ್ದಾರೆ.</verse>
				<verse number="31">ಹೀಗಿರುವಲ್ಲಿ ನಾವು ಏನು ಹೇಳೋಣ? ದೇವರೇ ನಮ್ಮ ಪರ ಇರುವಾಗ ನಮ್ಮನ್ನು ವಿರೋಧಿಸುವವರು ಯಾರು?</verse>
				<verse number="32">ದೇವರು ತಮ್ಮ ಸ್ವಂತ ಪುತ್ರನನ್ನೇ ನಮ್ಮೆಲ್ಲರಿಗಾಗಿ ಕೊಡಲು ಹಿಂಜರಿಯಲಿಲ್ಲ. ತಮ್ಮ ಪುತ್ರನನ್ನೇ ಬಲಿದಾನವಾಗಿ ಅರ್ಪಿಸಿದ ದೇವರು ಮತ್ತೇನನ್ನು ತಾನೇ ನಮಗೆ ವರದಾನವಾಗಿ ಕೊಡದಿರಲಾರರು?</verse>
				<verse number="33">ದೇವರೇ ಆರಿಸಿಕೊಂಡವರ ಮೇಲೆ ಯಾರು ತಾನೇ ದೋಷಾರೋಪಣೆ ಮಾಡಬಲ್ಲರು? ದೇವರೇ ಅವರನ್ನು ನಿರ್ದೋಷಿಗಳೆಂದು ನಿರ್ಣಯಿಸಿರುವಾಗ ಅವರನ್ನು ದೋಷಿಗಳೆಂದು ನಿರ್ಣಯಿಸುವವರು ಯಾರು? ಪ್ರಾಣತ್ಯಾಗ ಮಾಡಿದ್ದಲ್ಲದೆ ಪುನರುತ್ಥಾನ ಹೊಂದಿದ ಕ್ರಿಸ್ತಯೇಸುವೇ ದೇವರ ಬಲಪಾರ್ಶ್ವದಲ್ಲಿದ್ದುಕೊಂಡು ನಮ್ಮ ಪರವಾಗಿ ಬಿನ್ನಯಿಸುತ್ತಿದ್ದಾರೆ.</verse>
				<verse number="34"></verse>
				<verse number="35">ಕ್ರಿಸ್ತಯೇಸುವಿನ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಯಾರಿಂದ ಸಾಧ್ಯ? ಕಷ್ಟಸಂಕಟ, ಇಕ್ಕಟ್ಟು-ಬಿಕ್ಕಟ್ಟು, ಹಿಂಸೆ ಬಾಧೆ ಇವುಗಳಿಂದ ಸಾಧ್ಯವೆ? ಇಲ್ಲ, ಹಸಿವು ನೀರಡಿಕೆ, ನಗ್ನಸ್ಥಿತಿ, ಆಪತ್ತು-ವಿಪತ್ತು, ಖಡ್ಗಕಠಾರಿಗಳಿಂದ ಸಾಧ್ಯವೆ? ಎಂದಿಗೂ ಇಲ್ಲ.</verse>
				<verse number="36">ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: ದಿನವಿಡೀ ನಿಮಗೋಸ್ಕರವೇ ಸಾವಿಗೀಡಾಗುತಿಹೆವು ನಾವು ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಪರಿಗಣಿತರಾಗುತಿಹೆವು ನಾವು.”</verse>
				<verse number="37">ನಮ್ಮನ್ನು ಪ್ರೀತಿಸಿದ ಯೇಸುಕ್ರಿಸ್ತರ ಮುಖಾಂತರ ಇವೆಲ್ಲವುಗಳಲ್ಲಿಯೂ ನಾವು ಪೂರ್ಣ ಜಯಶಾಲಿಗಳಾಗುತ್ತೇವೆ.</verse>
				<verse number="38">ಸಾವಾಗಲಿ ಜೀವವಾಗಲಿ, ದೇವದೂತರಾಗಲಿ ದುರಾತ್ಮರಾಗಲಿ, ಈಗಿನ ಸಂತತಿಗಳೇ ಆಗಲಿ, ಭವಿಷ್ಯದ ಆಗುಹೋಗುಗಳೇ ಆಗಲಿ, ಯಾವ ಶಕ್ತಿಗಳೇ ಆಗಲಿ ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ತೋರಿಬಂದ ದೈವಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲಾರವು.</verse>
				<verse number="39">ಅಂತೆಯೇ, ಮೇಲಣ ಲೋಕವಾಗಲಿ, ಕೆಳಗಣ ಲೋಕವಾಗಲಿ, ಸೃಷ್ಟಿಸಮಸ್ತಗಳಲ್ಲಿ ಯಾವುದೇ ಆಗಲಿ, ಆ ಪ್ರೀತಿಯಿಂದ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಇದು ನಿಶ್ಚಯ.</verse>
			</chapter>
			<chapter number="9">
				<verse number="1">ನನ್ನ ಜನರಾದ ಯೆಹೂದ್ಯರ ವಿಷಯವಾಗಿ ನನಗೆ ಅತೀವ ದುಃಖವೂ ನಿರಂತರ ಮನೋವೇದನೆಯೂ ಉಂಟಾಗುತ್ತಿದೆ.</verse>
				<verse number="2">ಇದು ಸುಳ್ಳಲ್ಲ, ಕ್ರಿಸ್ತಯೇಸುವಿನಲ್ಲಿ ಸತ್ಯವಾಗಿಯೇ ಹೇಳುತ್ತಿದ್ದೇನೆ. ಪವಿತ್ರಾತ್ಮಾಧೀನವಾಗಿರುವ ನನ್ನ ಮನಸ್ಸೇ ಇದಕ್ಕೆ ಸಾಕ್ಷಿಯಾಗಿದೆ.</verse>
				<verse number="3">ಸ್ವದೇಶಿಯರೂ ರಕ್ತಸಂಬಂಧಿಕರೂ ಆದ ನನ್ನ ಸಹೋದರರ ಪರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕೃತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.</verse>
				<verse number="4">ಅವರೇ ಇಸ್ರಯೇಲರು. ದೇವರೇ ಇವರನ್ನು ಮಕ್ಕಳನ್ನಾಗಿ ಆರಿಸಿಕೊಂಡರು; ಇವರಿಗೆ ತಮ್ಮ ಮಹಿಮೆಯನ್ನು ವ್ಯಕ್ತಪಡಿಸಿದರು; ಇವರೊಡನೆ ಒಡಂಬಡಿಕೆಯನ್ನು ಮಾಡಿಕೊಂಡರು; ಇವರಿಗೆ ಧರ್ಮಶಾಸ್ತ್ರವನ್ನೂ ಸಭಾರಾಧನೆಯನ್ನೂ ವಾಗ್ದಾನಗಳನ್ನೂ ದಯಪಾಲಿಸಿದರು.</verse>
				<verse number="5">ಅಬ್ರಹಾಮ್, ಇಸಾಕ್ ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್.</verse>
				<verse number="6">ದೇವರ ವಾಗ್ದಾನ ವಿಫಲವಾಯಿತೆಂದು ನಾನು ಹೇಳುತ್ತಿಲ್ಲ. ಇಸ್ರಯೇಲ್ ವಂಶದಲ್ಲಿ ಹುಟ್ಟಿದವರೆಲ್ಲರೂ ನಿಜವಾದ ಇಸ್ರಯೇಲರಲ್ಲ.</verse>
				<verse number="7">ಅಂತೆಯೇ ಅಬ್ರಹಾಮನ ಸಂತತಿಯಲ್ಲಿ ಹುಟ್ಟಿದ ಮಾತ್ರಕ್ಕೆ ಎಲ್ಲರೂ ಅಬ್ರಹಾಮನ ಮಕ್ಕಳಾಗುವುದಿಲ್ಲ. “ಇಸಾಕನಿಂದ ಹುಟ್ಟುವವರು ನಿನ್ನ ಸಂತತಿ ಎನಿಸಿಕೊಳ್ಳುವರು,” ಎಂದು ದೇವರು ಅಬ್ರಹಾಮನಿಗೆ ನುಡಿದರು.</verse>
				<verse number="8">ಈ ಮಾತಿನ ಅರ್ಥವೇನೆಂದರೆ: ಶರೀರ ಸಂಬಂಧದಿಂದ ಹುಟ್ಟಿದವರೆಲ್ಲರೂ ದೇವರ ಮಕ್ಕಳಾಗುವುದಿಲ್ಲ; ದೈವವಾಗ್ದಾನದ ಪರಿಣಾಮವಾಗಿ ಹುಟ್ಟಿದವರೇ ನಿಜವಾಗಿಯೂ ಅಬ್ರಹಾಮನ ಸಂತತಿ ಎನಿಸಿಕೊಳ್ಳುವರು.</verse>
				<verse number="9">ಆ ವಾಗ್ದಾನ ಹೀಗಿತ್ತು: “ನಿಯಮಿತ ಕಾಲದಲ್ಲಿ ನಾನು ಮರಳಿ ಬರುವೆನು. ಆಗ ಸಾರಳಿಗೆ ಒಬ್ಬ ಮಗನಿರುವನು.”</verse>
				<verse number="10">ಅಷ್ಟುಮಾತ್ರವಲ್ಲ, ನಮ್ಮ ಮೂಲಪಿತ ಇಸಾಕನಿಂದ ರೆಬೆಕ್ಕಳಿಗೆ ಅವಳಿಜವಳಿ ಮಕ್ಕಳಾದರು.</verse>
				<verse number="11">ಅವರು ಹುಟ್ಟುವುದಕ್ಕೆ ಮುಂಚೆಯೇ, ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡುವುದಕ್ಕೆ ಮೊದಲೇ, “ಹಿರಿಯವನು ಕಿರಿಯವನಿಗೆ ಸೇವೆಮಾಡುವನು,” ಎಂದು ಆಕೆಗೆ ಹೇಳಲಾಗಿತ್ತು. ಇದರಿಂದ ದೇವರು ತಮಗಿಷ್ಟಬಂದವರನ್ನು ಆರಿಸಿಕೊಳ್ಳುತ್ತಾರೆಂಬ ಸಂಕಲ್ಪವು ಸ್ಥಿರಗೊಂಡಿತು. ಈ ಸಂಕಲ್ಪ ಮಾನವನು ಸಾಧಿಸುವ ಸತ್ಕಾರ್ಯಗಳ ಮೇಲೆ ಅಲ್ಲ, ಕರೆನೀಡುವ ದೇವರ ಚಿತ್ತದ ಮೇಲೆ ನೆಲೆಗೊಂಡಿದೆ.</verse>
				<verse number="12"></verse>
				<verse number="13">ಅಂತೆಯೇ, “ನಾನು ಯಕೋಬನನ್ನು ಪ್ರೀತಿಸಿದೆನು. ಏಸಾವನನ್ನು ದ್ವೇಷಿಸಿದೆನು,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.</verse>
				<verse number="14">ಹೀಗಿರಲಾಗಿ, ನಾವು ಏನೆಂದು ಹೇಳೋಣ? ದೇವರಲ್ಲಿ ಅನ್ಯಾಯವಿದೆಯೆಂದು ಹೇಳೋಣವೆ? ಎಂದಿಗೂ ಅಲ್ಲ.</verse>
				<verse number="15">ಏಕೆಂದರೆ ದೇವರೇ ಮೋಶೆಗೆ ಈ ರೀತಿ ಹೇಳಿದ್ದಾರೆ: “ಯಾರ ಮೇಲೆ ದಯೆತೋರಲು ನನಗೆ ಇಷ್ಟವಿದೆಯೋ ಅವರ ಮೇಲೆ ದಯೆತೋರುವೆನು ಯಾರ ಮೇಲೆ ಕನಿಕರತೋರಲು ನನಗೆ ಮನಸ್ಸಿದೆಯೋ ಅವರ ಮೇಲೆ ಕನಿಕರ ತೋರುವೆನು.”</verse>
				<verse number="16">ದೇವರ ದಯೆ ದೊರಕುವುದು ಮಾನವನ ಇಚ್ಛೆಯಿಂದಲ್ಲ, ಅವನ ಪ್ರಯತ್ನದಿಂದಲೂ ಅಲ್ಲ. ಅದು ದೊರಕುವುದು ದೇವರ ಕರುಣೆಯಿಂದಲೇ.</verse>
				<verse number="17">ಪವಿತ್ರಗ್ರಂಥದಲ್ಲಿ ಫರೋಹನಿಗೆ ಹೀಗೆಂದು ಹೇಳಲಾಗಿದೆ: “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ಪ್ರದರ್ಶಿಸುವ ಸಲುವಾಗಿ ಹಾಗು ಜಗತ್ತಿನಲ್ಲೆಲ್ಲಾ ನನ್ನ ಹೆಸರನ್ನು ಪ್ರಖ್ಯಾತಪಡಿಸಿಕೊಳ್ಳುವ ಸಲುವಾಗಿ ನಿನ್ನನ್ನು ಉನ್ನತಸ್ಥಾನಕ್ಕೆ ಏರಿಸಿದೆನು.</verse>
				<verse number="18">ದೇವರ ಇಚ್ಛೆಗೆ ಅನುಗುಣವಾಗಿ ಮಾನವರಿಗೆ ಕರುಣೆಯೂ ಲಭಿಸುತ್ತದೆ, ಕಾಠಿಣ್ಯವೂ ಲಭಿಸುತ್ತದೆ.</verse>
				<verse number="19">“ಹಾಗಾದರೆ ದೇವರು ಹೇಗೆ ತಾನೆ ಮಾನವನನ್ನು ಅಪರಾಧಿ ಎಂದು ನಿರ್ಣಯಿಸಬಲ್ಲರು? ಅವರ ಚಿತ್ತವನ್ನು ವಿರೋಧಿಸಲು ಯಾರಿಗೆ ಸಾಧ್ಯ” ಎಂದು ನಿಮ್ಮಲ್ಲಿ ಒಬ್ಬನು ಕೇಳಬಹುದು.</verse>
				<verse number="20">ಹುಲುಮಾನವಾ, ದೇವರೊಡನೆ ವಾದಿಸಲು ನೀನಾರು? ಮಡಿಕೆಯು ತನ್ನನ್ನು ಮಾಡಿದವನನ್ನು ನೋಡಿ, “ನನ್ನನ್ನು ಹೀಗೇಕೆ ಮಾಡಿದೆ” ಎಂದು ಕೇಳುವುದುಂಟೇ?</verse>
				<verse number="21">ಒಂದೇ ಮಣ್ಣಿನ ಮುದ್ದೆಯಿಂದ ಎರಡು ಕುಡಿಕೆಗಳನ್ನು ಅಂದರೆ ಒಂದನ್ನು ವಿಶೇಷ ಬಳಕೆಗೂ ಇನ್ನೊಂದನ್ನು ಸಾಮಾನ್ಯ ಬಳಕೆಗೂ ಮಾಡುವ ಅಧಿಕಾರ ಕುಂಬಾರನಿಗೆ ಇಲ್ಲವೆ?</verse>
				<verse number="22">ದೇವರ ವಿಷಯದಲ್ಲಿಯೂ ಅಂತೆಯೇ. ದೇವರು ತಮ್ಮ ಕೋಪಾಗ್ನಿಯನ್ನು ಪ್ರದರ್ಶಿಸಿ, ತಮ್ಮ ಶಕ್ತಿಯನ್ನು ಪ್ರಕಟಿಸಲು ಬಯಸಿದರು. ಹಾಗೆಮಾಡದೆ ವಿಕೋಪಕ್ಕೂ ವಿನಾಶಕ್ಕೂ ಮಾಡಲಾಗಿದ್ದ ಕುಡಿಕೆಯನ್ನು ಹೋಲುವವರನ್ನು ಅತ್ಯಂತ ಸಹನೆಯಿಂದ ಸೈರಿಸಿಕೊಂಡರಾದರೆ, ಯಾರು ಏನನ್ನು ತಾನೇ ಹೇಳಲಾದೀತು?</verse>
				<verse number="23">ಈ ಮೂಲಕ ತಮ್ಮ ಕರುಣೆಯನ್ನು ಹೊಂದಲು ಅವರು ಮೊದಲೇ ತಯಾರಿಸಿದ್ದ ಕುಡಿಕೆಯನ್ನು ಹೋಲುವವರಿಗೆ ದೇವರು ತಮ್ಮ ಮಹಿಮಾತಿಶಯವನ್ನು ತೋರ್ಪಡಿಸಲು ಇಚ್ಛಿಸಿದರು.</verse>
				<verse number="24">ಯೆಹೂದ್ಯ ಜನಾಂಗದಿಂದ ಮಾತ್ರವಲ್ಲ, ಇತರ ಜನಾಂಗದಿಂದಲೂ ಕರೆಯಲಾಗಿರುವ ನಾವೇ ಈ ಕರುಣೆಯ ಕುಡಿಕೆಗಳು.</verse>
				<verse number="25">ಹೋಶೇಯನ ಗ್ರಂಥದಲ್ಲಿ ದೇವರೇ ಹೀಗೆ ಹೇಳಿದ್ದಾರೆ: “ನನ್ನ ಜನರಲ್ಲದವರನ್ನು ನನ್ನ ಜನರೆಂದು ಕರೆಯುವೆನು. ನನಗೆ ಪ್ರಿಯವಲ್ಲದ ನಾಡನ್ನು ನನ್ನ ಪ್ರಿಯತಮೆ ಎಂದು ಕರೆಯುವೆನು.”</verse>
				<verse number="26">“ ‘ನೀವು ನನ್ನ ಜನರಲ್ಲ’ ಎಂದು ಯಾವ ಸ್ಥಳದಲ್ಲಿ ಬರೆಯಲಾಗಿತ್ತೋ ಅದೇ ಸ್ಥಳದಲ್ಲಿ ‘ಅವರನ್ನು ಜೀವಂತ ದೇವರ ಮಕ್ಕಳು ಎಂದು ಕರೆಯಲಾಗುವುದು.’ “</verse>
				<verse number="27">ಇಸ್ರಯೇಲಿನ ಬಗ್ಗೆ ಯೆಶಾಯನು ಹೀಗೆಂದು ಘೋಷಿಸಿದ್ದಾನೆ: “ಶೀಘ್ರದಲ್ಲೇ ಸರ್ವೇಶ್ವರ ವಿಶ್ವದ ಲೆಕ್ಕಾಚಾರವನ್ನು ಪೂರ್ತಿಯಾಗಿ ತೆಗೆದುಕೊಳ್ಳುವರು. ಇಸ್ರಯೇಲಿನ ಜನರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾಗಿದ್ದರೂ ಅವರಲ್ಲಿ ಕೆಲವರೇ ಜೀವೋದ್ಧಾರವನ್ನು ಹೊಂದುವರು.”</verse>
				<verse number="28"></verse>
				<verse number="29">ಅದೇ ಅಭಿಪ್ರಾಯದಿಂದ ಯೆಶಾಯನು ಮತ್ತೊಂದು ವಚನದಲ್ಲಿ - “ಸರ್ವಶಕ್ತ ಸರ್ವೇಶ್ವರ ನಮ್ಮ ಸಂತತಿಯಲ್ಲಿ ಕೆಲವರನ್ನಾದರೂ ಉಳಿಸದೆಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ಗತಿಯೇ ನಮ್ಮದಾಗುತ್ತಿತ್ತು,” ಎಂದು ಹೇಳಿದ್ದಾನೆ.</verse>
				<verse number="30">ಇಸ್ರಯೇಲರಾದರೋ ದೇವರೊಡನೆ ಸತ್ಸಂಬಂಧವನ್ನು ದೊರಕಿಸುವ ಧರ್ಮವನ್ನು ಅರಸುತ್ತಿದ್ದರೂ ಅದನ್ನು ಕಂಡುಹಿಡಿದಿಲ್ಲ.</verse>
				<verse number="31">ಇದಕ್ಕೆ ಕಾರಣವಾದರೂ ಏನು? ಅವರು ಸತ್ಕಾರ್ಯಗಳನ್ನು ಆಧಾರವಾಗಿಟ್ಟುಕೊಂಡರೇ ಹೊರತು ವಿಶ್ವಾಸವನ್ನಲ್ಲ.</verse>
				<verse number="32">ಆದ್ದರಿಂದಲೇ ಅವರು ಎಡವುಕಲ್ಲನ್ನು ಎಡವಿಬಿದ್ದರು.</verse>
				<verse number="33">ಪವಿತ್ರಗ್ರಂಥದಲ್ಲಿ ಹೀಗೆಂದು ಲಿಖಿತವಾಗಿದೆ: “ಇಗೋ, ಎಡವಿ ನೆಲಕ್ಕುರುಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸಿ ಬೀಳುವಂತೆ ಮಾಡುವ ಬಂಡೆಯನ್ನೂ ನಾನು ಸಿಯೋನಿನಲ್ಲಿ ಇರಿಸುವೆನು; ಆತನಲ್ಲಿ ವಿಶ್ವಾಸವಿಡುವವನಾದರೋ ಎಂದಿಗೂ ಆಶಾಭಂಗಗೊಳ್ಳನು.”</verse>
			</chapter>
			<chapter number="10">
				<verse number="1">ಸಹೋದರರೇ, ನನ್ನ ಸ್ವಜನರಾದ ಇಸ್ರಯೇಲರು ಜೀವೋದ್ಧಾರ ಹೊಂದಬೇಕೆಂದೇ ನನ್ನ ಹಾರ್ದಿಕ ಹಂಬಲ. ನಾನು ದೇವರಲ್ಲಿ ಮಾಡುವ ಪ್ರಾರ್ಥನೆಯೂ ಇದೇ.</verse>
				<verse number="2">ದೇವರ ವಿಷಯದಲ್ಲಿ ಅವರು ಬಹಳ ನಿಷ್ಠಾವಂತರು ಎಂದು ಒತ್ತಿಹೇಳಬಲ್ಲೆ. ಆದರೆ ಆ ನಿಷ್ಠೆ ನೈಜಜ್ಞಾನವನ್ನು ಆಧರಿಸಿಲ್ಲ.</verse>
				<verse number="3">ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಮಾರ್ಗವನ್ನು ಅರಿಯದೆ ತಮ್ಮದೇ ಆದ ಧರ್ಮವನ್ನು ಸ್ಥಾಪಿಸಲು ಅವರು ಪ್ರಯತ್ನಿಸಿದರು. ಎಂದೇ ಅವರು ದೈವ ಸತ್ಸಂಬಂಧಕ್ಕೆ ಬಾಹಿರರಾದರು.</verse>
				<verse number="4">ದೇವರಲ್ಲಿ ವಿಶ್ವಾಸವಿಡುವ ಪ್ರತಿಯೊಬ್ಬನಿಗೂ ಆ ಸತ್ಸಂಬಂಧ ದೊರಕುವಂತೆ ಕ್ರಿಸ್ತಯೇಸು ಧರ್ಮಶಾಸ್ತ್ರವನ್ನು ಇತಿಗೊಳಿಸಿದರು.</verse>
				<verse number="5">ಧರ್ಮಶಾಸ್ತ್ರ ಪಾಲನೆಯಿಂದ ಲಭಿಸುವ ಸತ್ಸಂಬಂಧದ ಬಗ್ಗೆ ಮೋಶೆ ಹೀಗೆ ಬರೆದಿದ್ದಾನೆ: “ಧರ್ಮಶಾಸ್ತ್ರದ ನೇಮನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕ ಜೀವಿಸುವನು.”</verse>
				<verse number="6">ಆದರೆ ವಿಶ್ವಾಸದ ಮೂಲಕ ದೊರಕುವ ಸತ್ಸಂಬಂಧದ ಬಗ್ಗೆ ಹೀಗೆ ಬರೆಯಲಾಗಿದೆ: “ಕ್ರಿಸ್ತಯೇಸುವನ್ನು ಕೆಳಕ್ಕೆ ಕರೆತರಲು ಸ್ವರ್ಗಕ್ಕೆ ಏರಿಹೋಗುವವರು ಯಾರು?” ಎಂದಾಗಲೀ,</verse>
				<verse number="7">“ಕ್ರಿಸ್ತಯೇಸುವನ್ನು ಸಾವಿನಿಂದ ಮೇಲಕ್ಕೆ ಕರೆತರಲು ಪಾತಾಳಕ್ಕೆ ಇಳಿದುಹೋಗುವವರು ಯಾರು?” ಎಂದಾಗಲೀ ನಿನ್ನ ಮನದಲ್ಲಿ ನೀನು ಪ್ರಶ್ನಿಸಿಕೊಳ್ಳಬೇಕಾಗಿಲ್ಲ.</verse>
				<verse number="8">ಧರ್ಮಗ್ರಂಥವು ಹೇಳುವುದಿಷ್ಟೆ; ದೇವರ ವಾಕ್ಯ ನಿನ್ನ ಸಮೀಪದಲ್ಲೇ ಇದೆ. ಅದು ನಿನ್ನ ಬಾಯಲ್ಲೂ ಹೃದಯದಲ್ಲೂ ಇದೆ. ಅದೇ ನಾವು ನಿಮಗೆ ಬೋಧಿಸುವ ವಿಶ್ವಾಸದ ವಾಕ್ಯ.</verse>
				<verse number="9">“ಯೇಸುಸ್ವಾಮಿಯೇ ಪ್ರಭು” ಎಂದು ನೀನು ಬಾಯಿಂದ ನಿವೇದಿಸಿ, ಅವರನ್ನು ದೇವರು ಸಾವಿನಿಂದ ಪುನರುತ್ಥಾನಗೊಳಿಸಿದ್ದಾರೆಂದು ಹೃದಯದಿಂದ ವಿಶ್ವಾಸಿಸಿದರೆ ಜೀವೋದ್ಧಾರವನ್ನು ಹೊಂದುತ್ತೀಯೆ.</verse>
				<verse number="10">ಹೌದು, ಹೃದಯಪೂರ್ವಕವಾಗಿ ವಿಶ್ವಾಸಿಸುವವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆ; ಬಾಯಿಂದ ನಿವೇದಿಸುವವನು ಜೀವೋದ್ಧಾರ ಹೊಂದುತ್ತಾನೆ.</verse>
				<verse number="11">ಏಕೆಂದರೆ, “ಅವರಲ್ಲಿ ವಿಶ್ವಾಸ ಇಡುವ ಯಾರಿಗೂ ಆಶಾಭಂಗವಾಗುವುದಿಲ್ಲ,” ಎಂದು ಪವಿತ್ರಗ್ರಂಥದಲ್ಲೇ ಹೇಳಲಾಗಿದೆ.</verse>
				<verse number="12">ಈ ವಿಷಯದಲ್ಲಿ ಯೆಹೂದ್ಯರು, ಯೆಹೂದ್ಯರಲ್ಲದವರು ಎಂಬ ಭೇದಭಾವವಿಲ್ಲ. ಸರ್ವರಿಗೂ ಒಬ್ಬರೇ ಪ್ರಭು. ತಮ್ಮನ್ನು ಬೇಡಿಕೊಳ್ಳುವ ಎಲ್ಲರಿಗೂ ಅವರು ಧಾರಾಳವಾಗಿ ವರದಾನವನ್ನು ನೀಡುತ್ತಾರೆ.</verse>
				<verse number="13">“ಪ್ರಭುವಿನ ನಾಮಸ್ಮರಣೆಮಾಡುವ ಪ್ರತಿಯೊಬ್ಬನೂ ಜೀವೋದ್ಧಾರವನ್ನು ಹೊಂದುತ್ತಾನೆ,” ಎಂದು ಲಿಖಿತವಾಗಿದೆ.</verse>
				<verse number="14">ಪ್ರಭುವಿನಲ್ಲಿ ವಿಶ್ವಾಸವಿಲ್ಲದಿದ್ದರೆ ಅವರ ನಾಮಸ್ಮರಣೆ ಮಾಡುವುದಾದರೂ ಹೇಗೆ? ಅವರ ವಿಷಯವನ್ನು ಕುರಿತು ಕೇಳದಿದ್ದರೆ ಅವರನ್ನು ವಿಶ್ವಾಸಿಸುವುದಾದರೂ ಹೇಗೆ? ಬೋಧಿಸುವವರು ಇಲ್ಲದಿದ್ದರೆ ಅವರ ವಿಷಯವನ್ನು ಕುರಿತು ಕೇಳುವುದಾದರೂ ಹೇಗೆ?</verse>
				<verse number="15">ಬೋಧಿಸುವವರನ್ನು ಕಳುಹಿಸದೆಹೋದರೆ, ಅವರು ಶುಭಸಂದೇಶವನ್ನು ಬೋಧಿಸುವುದಾದರೂ ಹೇಗೆ? “ಶುಭಸಂದೇಶವನ್ನು ತರುವವರ ಬರುವಿಕೆ ಎಷ್ಟೋ ಶುಭದಾಯಕ,” ಎಂದು ಪವಿತ್ರಗ್ರಂಥದಲ್ಲೇ ಬರೆಯಲಾಗಿದೆ.</verse>
				<verse number="16">ಆದರೂ ಈ ಶುಭಸಂದೇಶವನ್ನು ಎಲ್ಲರೂ ಅಂಗೀಕರಿಸಲಿಲ್ಲ. ಆದ್ದರಿಂದಲೇ, ಯೆಶಾಯನು, “ಪ್ರಭುವೇ, ನಾವು ಸಾರಿದ ಸಂದೇಶವನ್ನು ನಂಬಿದವರು ಯಾರು?” ಎಂದು ಮೊರೆಯಿಟ್ಟಿದ್ದಾನೆ.</verse>
				<verse number="17">ಇಂತಿರಲು, ಶುಭಸಂದೇಶವನ್ನು ಆಲಿಸುವುದರಿಂದ ವಿಶ್ವಾಸ ಮೂಡುತ್ತದೆ; ಶುಭಸಂದೇಶ ಕ್ರಿಸ್ತಯೇಸುವನ್ನು ಬೋಧಿಸುವುದರ ಮೂಲಕ ಪ್ರಕಟವಾಗುತ್ತದೆ.</verse>
				<verse number="18">ಈಗ ನನ್ನದೊಂದು ಪ್ರಶ್ನೆ: “ಇಸ್ರಯೇಲರಿಗೆ ಶುಭಸಂದೇಶವನ್ನು ಕೇಳುವ ಸಂದರ್ಭ ಇರಲಿಲ್ಲವೆ?” ನಿಶ್ಚಯವಾಗಿ ಇತ್ತು. ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಸಾರುವವರ ಧ್ವನಿ ಜಗದಲ್ಲೆಲ್ಲಾ ಹರಡಿತು. ಅವರ ನುಡಿ ಭೂಮಿಯ ತುತ್ತತುದಿಯನ್ನು ಮುಟ್ಟಿತು.”</verse>
				<verse number="19">ಹಾಗೆಂದ ಮೇಲೆ ಇಸ್ರಯೇಲರು ಆ ಶುಭಸಂದೇಶವನ್ನು ಅರ್ಥಮಾಡಿಕೊಳ್ಳಲಿಲ್ಲ. ಎನ್ನೋಣವೆ? ಮೊದಲನೆಯದಾಗಿ, ಮೋಶೆಯ ಮಾತಿನಲ್ಲಿ ಉತ್ತರಿಸುವುದಾದರೆ: “ ‘ಜನಾಂಗ’ ಎನಿಸಿಕೊಳ್ಳದವರನ್ನು ನೋಡಿ ನೀವು ಅಸೂಯೆಪಡುವಂತೆ ಮಾಡುತ್ತೇನೆ; ಮತಿಹೀನರೆನಿಸಿಕೊಂಡ ಜನಾಂಗವನ್ನು ನೋಡಿ ನೀವು ಕೆರಳುವಂತೆ ಮಾಡುತ್ತೇನೆ.”</verse>
				<verse number="20">ಯೆಶಾಯನು ಮತ್ತಷ್ಟು ದಿಟ್ಟತನದಿಂದ ಈ ರೀತಿ ಹೇಳಿದ್ದಾನೆ: “ನನ್ನನ್ನು ಅರಸದವರಿಗೂ ನಾನು ಕಾಣಿಸಿಕೊಂಡೆ ನನ್ನ ಬಗ್ಗೆ ವಿಚಾರಿಸದವರಿಗೂ ನಾನು ಪ್ರತ್ಯಕ್ಷನಾದೆ.”</verse>
				<verse number="21">ಆದರೆ ಇಸ್ರಯೇಲರನ್ನು ಕುರಿತು: “ಅವಿಧೇಯರೂ ಪ್ರತಿಭಟಿಸುವವರೂ ಆದ ಈ ಜನಾಂಗವನ್ನು ದಿನವೆಲ್ಲಾ ನಾನು ಕೈಚಾಚಿ ಕರೆದೆ,” ಎಂದು ಪ್ರವಾದಿಸಿದ್ದಾನೆ.</verse>
			</chapter>
			<chapter number="11">
				<verse number="1">ಹಾಗಾದರೆ ದೇವರು ತಮ್ಮ ಜನರಾದ ಇಸ್ರಯೇಲರನ್ನು ತಿರಸ್ಕರಿಸಿದ್ದಾರೆ ಎಂದು ಹೇಳೋಣವೆ? ಎಂದಿಗೂ ಇಲ್ಲ. ನಾನು ಸಹ ಇಸ್ರಯೇಲನು, ಅಬ್ರಹಾಮನ ಸಂತತಿಯವನು; ಬೆನ್ಯಮೀನ್ ಮನೆತನಕ್ಕೆ ಸೇರಿದವನು.</verse>
				<verse number="2">ದೇವರು ಮುಂಚಿತವಾಗಿಯೇ ಆರಿಸಿಕೊಂಡಿದ್ದ ತಮ್ಮ ಜನಾಂಗವನ್ನು ತಿರಸ್ಕರಿಸಲಿಲ್ಲ. ಎಲೀಯನ ವಿಷಯವಾಗಿ ಪವಿತ್ರಗ್ರಂಥವು ಹೇಳಿರುವುದು ನಿಮಗೆ ತಿಳಿಯದೋ?</verse>
				<verse number="3">ಆತನು ಇಸ್ರಯೇಲರ ವಿರುದ್ಧ, “ಸರ್ವೇಶ್ವರಾ, ಈ ಜನರು ನಿಮ್ಮ ಪ್ರವಾದಿಗಳನ್ನು ಸಂಹರಿಸಿದ್ದಾರೆ. ನಿಮ್ಮ ಬಲಿಪೀಠಗಳನ್ನು ಕೆಡವಿಹಾಕಿದ್ದಾರೆ; ಉಳಿದಿರುವವನು ನಾನೊಬ್ಬನೇ. ನನ್ನನ್ನೂ ಕೊಲ್ಲಲು ಯತ್ನಿಸುತ್ತಿದ್ದಾರೆ,” ಎಂದು ದೇವರಿಗೆ ದೂರಿತ್ತನು.</verse>
				<verse number="4">ಅದಕ್ಕೆ ಆತನಿಗೆ ದೊರೆತ ಉತ್ತರವಾದರೂ ಏನು? “ಬಾಳ್‍ದೇವತೆಯ ವಿಗ್ರಹಕ್ಕೆ ಅಡ್ಡಬೀಳದ ಏಳುಸಾವಿರ ಜನರನ್ನು ನನಗಾಗಿ ಉಳಿಸಿಕೊಂಡಿದ್ದೇನೆ,” ಎಂದಲ್ಲವೆ?</verse>
				<verse number="5">ಅಂತೆಯೇ, ದೈವಾನುಗ್ರಹದಿಂದ ಆಯ್ಕೆಯಾದ ಸ್ವಲ್ಪಮಂದಿ ಈಗಲೂ ಉಳಿದಿದ್ದಾರೆ.</verse>
				<verse number="6">ಅವರು ಆಯ್ಕೆಯಾದುದು ತಮ್ಮ ಸತ್ಕಾರ್ಯಗಳ ಆಧಾರದಿಂದಲ್ಲ, ದೈವಾನುಗ್ರಹದಿಂದಲೇ. ಇಲ್ಲದಿದ್ದರೆ, ದೈವಾನುಗ್ರಹ ನಿಜವಾಗಿ ದೈವಾನುಗ್ರಹ ಎನಿಸಿಕೊಳ್ಳುತ್ತಿರಲಿಲ್ಲ.</verse>
				<verse number="7">ಇದರ ಅರ್ಥವಾದರೂ ಏನು? ಇಸ್ರಯೇಲರು ಅರಸುತ್ತಿದ್ದುದು ಅವರಿಗೆ ದೊರಕಲಿಲ್ಲ. ಆಯ್ಕೆಯಾದವರಿಗೆ ಮಾತ್ರ ಅದು ದೊರಕಿತು. ಮಿಕ್ಕವರು ಕಠಿಣ ಹೃದಯಿಗಳಾದರು.</verse>
				<verse number="8">“ದೇವರು ಅವರಿಗೆ ಜಡಸ್ವಭಾವವನ್ನು ಕೊಟ್ಟರು. ಇಂದಿನವರೆಗೂ ಅವರು ಕಣ್ಣಿದ್ದೂ ಕಾಣರು, ಕಿವಿಯಿದ್ದೂ ಕೇಳರು,” ಎಂದು ಲಿಖಿತವಾಗಿದೆ. ಇದಲ್ಲದೆ ದಾವೀದನು ಇಂತೆಂದಿದ್ದಾನೆ:</verse>
				<verse number="9">“ಅವರ ಭೋಜನವೇ ಅವರಿಗೆ ಬಲೆಯೂ ಜಾಲವೂ ಆಗಲಿ ಯಾತನೆಯೂ ಪತನವೂ ಆಗಿ ಪರಿಣಮಿಸಲಿ.</verse>
				<verse number="10">ಅವರ ಕಣ್ಣು ಕುರುಡಾಗಲಿ ನಿರಂತರ ಭಾರದಿಂದ ಬೆನ್ನು ಗೂನಾಗಲಿ.”</verse>
				<verse number="11">ಹಾಗಾದರೆ ಇಸ್ರಯೇಲರು ಮೇಲೇಳದಂತೆ ಮುಗ್ಗರಿಸಿಬಿದ್ದರು ಎಂದು ಹೇಳೋಣವೆ? ಎಂದಿಗೂ ಇಲ್ಲ. ಅವರ ಅಪರಾಧದ ನಿಮಿತ್ತ ಇತರರಿಗೆ ಉದ್ಧಾರ ಲಭಿಸುವಂತಾಯಿತು. ಹೀಗೆ ಇತರರನ್ನು ನೋಡಿ ಅವರೇ ಅಸೂಯೆ ಪಡುವಂತಾಯಿತು.</verse>
				<verse number="12">ಅವರ ಅಪರಾಧ ಜಗತ್ತಿಗೆಲ್ಲ ಸೌಭಾಗ್ಯವನ್ನೂ ಅವರ ಅಪಜಯವು ಇತರರಿಗೆಲ್ಲಾ ಆಶೀರ್ವಾದವನ್ನೂ ತರಲು ಕಾರಣವಾದರೆ, ಅವರ ಸಂಪೂರ್ಣ ಪರಿವರ್ತನೆ ಮತ್ತೆಷ್ಟೋ ಕಲ್ಯಾಣವನ್ನು ಉಂಟುಮಾಡಬೇಕಲ್ಲವೆ?</verse>
				<verse number="13">ಈಗ ನಾನು ಇಸ್ರಯೇಲರಲ್ಲದ ನಿಮ್ಮನ್ನು ಉದ್ದೇಶಿಸಿ ಹೇಳುತ್ತೇನೆ: ನಾನು ನಿಮ್ಮಂಥ ಅನ್ಯಜನರಿಗೆ ಪ್ರೇಷಿತನಾಗಿ ಕಳುಹಿಸಲ್ಪಟ್ಟವನು. ಇದರ ಬಗ್ಗೆ ಹೆಮ್ಮೆಪಡುತ್ತೇನೆ.</verse>
				<verse number="14">ಆದರೂ ಈ ಸೇವೆಯ ಮೂಲಕ ನನ್ನ ಸ್ವಜನರಲ್ಲಿ ಪ್ರೇಮಾಸೂಯೆಯನ್ನು ಮೂಡಿಸಿ ಅವರಲ್ಲಿ ಬಹುಶಃ ಕೆಲವರನ್ನಾದರೂ ಉದ್ಧಾರದ ಮಾರ್ಗಕ್ಕೆ ತರಲು ಸಾಧ್ಯವಾದೀತೆಂದು ನಂಬುತ್ತೇನೆ.</verse>
				<verse number="15">ಇಸ್ರಯೇಲರು ತಿರಸ್ಕೃತರಾದ್ದರಿಂದ ಜಗತ್ತು ದೇವರೊಡನೆ ಸಂಧಾನವಾಗಲು ಸಾಧ್ಯವಾಯಿತಾದರೆ ಅವರು ಸ್ವೀಕೃತರಾಗುವಾಗ ಇನ್ನೇನು ತಾನೆ ಸಂಭವಿಸದು! ಸತ್ತವರು ಜೀವಕ್ಕೆ ಎದ್ದುಬಂದಂತಾಗುವುದಲ್ಲವೆ?</verse>
				<verse number="16">ಹಿಟ್ಟಿನಲ್ಲಿ ಮೊದಲ ಹಿಡಿ ನೈವೇದ್ಯ ಆದಮೇಲೆ ಹಿಟ್ಟಿನ ರಾಶಿಯೆಲ್ಲಾ ನೈವೇದ್ಯ ಆದಂತೆಯೇ. ಅಂತೆಯೇ, ಬೇರು ದೇವರದಾಗಿದ್ದ ಮೇಲೆ ರೆಂಬೆಗಳೂ ದೇವರಿಗೆ ಸೇರಿದವು ಅಲ್ಲವೆ?</verse>
				<verse number="17">ಈಗ ಉತ್ತಮ ತಳಿಯ ಓಲಿವ್ ಮರದಿಂದ ಕೆಲವು ರೆಂಬೆಗಳನ್ನು ಕಡಿದುಹಾಕಿ ಆ ತಾವಿನಲ್ಲಿ ಕಾಡು ಓಲಿವ್ ಮರದ ರೆಂಬೆಯನ್ನು ಕಸಿಮಾಡಲಾಗಿದೆ. ಅನ್ಯಜನಾದ ನೀನು ಆ ಕಾಡುಮರದ ರೆಂಬೆಯಂತಿರುವೆ; ಕಸಿಮಾಡಿರುವುದರಿಂದ ರಸವತ್ತಾದ ಆ ಬೇರಿನಿಂದ ಈಗ ಪೋಷಣೆ ಪಡೆಯುತ್ತಿರುವೆ.</verse>
				<verse number="18">ಹೀಗಿರಲಾಗಿ, ಕಡಿದುಹಾಕಿದ ರೆಂಬೆಗಳಂತಿರುವ ಇಸ್ರಯೇಲರನ್ನು ಕಡೆಗಣಿಸುತ್ತಾ ಹೆಮ್ಮೆಪಡಬೇಡ. ಹೆಮ್ಮೆಪಟ್ಟರೂ ನೀನು ಕೇವಲ ರೆಂಬೆ ಮಾತ್ರ. ಬೇರಿಗೆ ಆಧಾರ ನೀನಲ್ಲ. ನಿನಗೆ ಆಧಾರ ಬೇರು ಎಂಬುದನ್ನು ನೆನಪಿನಲ್ಲಿಡು.</verse>
				<verse number="19">ಒಂದು ವೇಳೆ, “ನಾನು ಕಸಿಕಟ್ಟಿಸಿಕೊಳ್ಳಬೇಕೆಂದೇ ರೆಂಬೆಗಳನ್ನು ಕಡಿದುಹಾಕಲಾಗಿದೆ,” ಎಂದು ನೀನು ಹೇಳಬಹುದು.</verse>
				<verse number="20">ಅದು ಸರಿಯೆ. ಅವರ ಅವಿಶ್ವಾಸದ ಕಾರಣದಿಂದ ಅವರನ್ನು ಕಡಿದುಹಾಕಲಾಯಿತು. ನೀನು ದೃಢವಾಗಿ ನಿಂತಿರುವುದಾದರೋ ವಿಶ್ವಾಸದ ಪ್ರಯುಕ್ತವೇ. ಆದ್ದರಿಂದ ಗರ್ವಪಡಬೇಡ. ಭಯಭಕ್ತಿಯಿಂದಿರು.</verse>
				<verse number="21">ದೇವರು ಹುಟ್ಟುರೆಂಬೆಗಳನ್ನೇ ಉಳಿಸಲಿಲ್ಲ ಎಂದಮೇಲೆ ನಿನ್ನನ್ನು ಉಳಿಸುವರೆಂದು ತಿಳಿಯುವೆಯಾ?</verse>
				<verse number="22">ಇಲ್ಲ, ದೇವರ ಕರುಣೆ ಹಾಗೂ ಕಠಿಣತೆಯನ್ನು ಗಮನಿಸು. ಬಿದ್ದವರತ್ತ ಕಾಠಿಣ್ಯವನ್ನೂ ನಿನ್ನತ್ತ ಕರುಣೆಯನ್ನೂ ತೋರಿಸಿದ್ದಾರೆ. ನೀನು ಅವರ ಕರುಣೆಯನ್ನು ಆಶ್ರಯಿಸಿ ನಡೆಯಬೇಕು. ಇಲ್ಲವಾದರೆ ನಿನ್ನನ್ನು ಆ ರೆಂಬೆಗಳಂತೆ ಕಡಿದುಹಾಕಲಾಗುತ್ತದೆ.</verse>
				<verse number="23">ಇಸ್ರಯೇಲರು ತಮ್ಮ ಅವಿಶ್ವಾಸವನ್ನು ತ್ಯಜಿಸಿದರೆ ಆಗ ಅವರನ್ನೂ ಕಸಿಮಾಡಲಾಗುವುದು. ಹಾಗೆ ಕಸಿಮಾಡಲು ದೇವರು ಸಮರ್ಥರು.</verse>
				<verse number="24">ನೀನು ಕಾಡು ಓಲಿವ್ ಮರದಿಂದ ಕಡಿದ ರೆಂಬೆ. ಉತ್ತಮ ತಳಿಯ ಓಲಿವ್ ಮರಕ್ಕೆ ಕೃತಕವಾಗಿ ಕಸಿಕಟ್ಟಲಾಗಿರುವೆ. ಇಸ್ರಯೇಲರಾದರೋ ಉತ್ತಮ ತಳಿಯ ಓಲಿವ್ ಮರದಲ್ಲೇ ಹುಟ್ಟಿ ಬೆಳೆದ ರೆಂಬೆಗಳು. ಅದೇ ಮರದಲ್ಲಿ ಹುಟ್ಟಿ ಬೆಳೆದ ರೆಂಬೆಗಳನ್ನು ಕಡಿದು ಮತ್ತೆ ಅದಕ್ಕೆ ಕಸಿಕಟ್ಟುವುದು ಎಷ್ಟೋ ಸುಲಭವಲ್ಲವೆ?</verse>
				<verse number="25">ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.</verse>
				<verse number="26">ಅನಂತರ ಇಸ್ರಯೇಲ್ ಜನಾಂಗವೆಲ್ಲವೂ ಜೀವೋದ್ಧಾರವನ್ನು ಹೊಂದುವುದು. ಇದಕ್ಕೆ ಆಧಾರವಾಗಿ ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ಲೋಕೋದ್ಧಾರಕನು ಬರುವನು ಸಿಯೋನಿನಿಂದ; ಅಧರ್ಮತೆಯನು ನೀಗಿಸುವನು ಯಕೋಬವಂಶದಿಂದ.</verse>
				<verse number="27">ನಾನು ಪರಿಹರಿಸುವೆನು ಅವರ ಪಾಪಗಳನ್ನು ಅವರೊಡನೆ ಮಾಡಿಕೊಳ್ಳುವೆನಾಗ ಒಡಂಬಡಿಕೆಯನು.”</verse>
				<verse number="28">ಶುಭಸಂದೇಶವನ್ನು ತಿರಸ್ಕರಿಸಿದ್ದರಿಂದ ಇಸ್ರಯೇಲರು ದೇವರಿಗೆ ಶತ್ರುಗಳಾದರು. ಹೀಗಾದುದು ನಿಮ್ಮ ಹಿತಕ್ಕೋಸ್ಕರವೆ. ದೇವರಿಂದ ಆಯ್ಕೆ ಆದವರಾದರಿಂದ, ಪಿತಾಮಹ ಅಬ್ರಹಾಮ್, ಇಸಾಕ್ ಮತ್ತು ಯಕೋಬರ ನಿಮಿತ್ತ ಅವರು ದೇವರಿಗೆ ಮಿತ್ರರಾದರು.</verse>
				<verse number="29">ದೇವರು ತಾವೇ ನೀಡುವ ವರಗಳನ್ನಾಗಲಿ, ಕೊಡುವ ಕರೆಯನ್ನಾಗಲಿ ಹಿಂತೆಗೆದುಕೊಳ್ಳುವವರಲ್ಲ.</verse>
				<verse number="30">ಇಸ್ರಯೇಲರಲ್ಲದ ನೀವು ಹಿಂದೊಮ್ಮೆ ದೇವರಿಗೆ ಅವಿಧೇಯರಾಗಿದ್ದಿರಿ. ಆದರೆ ಈಗ ಇಸ್ರಯೇಲರ ಅವಿಧೇಯತೆಯ ನಿಮಿತ್ತ ದೇವರ ದಯೆಯನ್ನು ಹೊಂದಿದ್ದೀರಿ.</verse>
				<verse number="31">ಅದೇ ಪ್ರಕಾರ ಅವರು ಈಗ ಅವಿಧೇಯರಾಗಿದ್ದರೂ ನೀವು ಹೊಂದಿದ ಕರುಣೆಯ ನಿಮಿತ್ತ ಅವರೂ ಕರುಣೆಯನ್ನು ಹೊಂದುವರು.</verse>
				<verse number="32">ಏಕೆಂದರೆ, ಸರ್ವರೂ ತಮ್ಮ ಕರುಣೆಯನ್ನು ಸವಿಯುವಂತೆ ದೇವರು ಎಲ್ಲರನ್ನು ಅವಿಧೇಯತೆ ಎಂಬ ಬಂಧನಕ್ಕೆ ಒಳಪಡಿಸಿದ್ದಾರೆ.</verse>
				<verse number="33">ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!</verse>
				<verse number="34">“ಪ್ರಭುವಿನ ಮನಸ್ಸನ್ನು ಅರಿತವರಾರು? ಅವರಿಗೆ ಉಪದೇಶಿಸುವವರಾರು?</verse>
				<verse number="35">ಮೊದಲೇ ಅವರ ಬಳಿ ಕೊಟ್ಟಿಟ್ಟವರಾರು? ಹೀಗೆ ಅವರಿಂದ ಪ್ರತಿಫಲ ಪಡೆದವರಾರು?”</verse>
				<verse number="36">ಸಮಸ್ತವೂ ಉಂಟಾಗುವುದು ಅವರಿಂದಲೇ; ಮುಂದುವರಿಯುವುದೂ ಅವರ ಮುಖಾಂತರವೇ; ಇರುವುದೂ ಅವರಿಗೋಸ್ಕರವೇ. ಆ ಪ್ರಭುವಿಗೆ ಯುಗಯುಗಾಂತರಕ್ಕೂ ಸ್ತುತಿಸ್ತೋತ್ರ ಸಲ್ಲಲಿ. ಆಮೆನ್.</verse>
			</chapter>
			<chapter number="12">
				<verse number="1">ಆದುದರಿಂದ ಸಹೋದರರೇ, ದೇವರ ಅಪಾರ ಕೃಪೆಯನ್ನು ನಿಮ್ಮ ನೆನಪಿಗೆ ತಂದು ನಾನು ಬೇಡಿಕೊಳ್ಳುವುದೇನೆಂದರೆ: ನಿಮ್ಮನ್ನೇ ದೇವರಿಗೆ ಮೀಸಲಾದ, ಮೆಚ್ಚುಗೆಯಾದ ಸಜೀವವಾದ ಬಲಿಯಾಗಿ ಸಮರ್ಪಿಸಿಕೊಳ್ಳಿರಿ. ಇದೇ ನೀವು ಸಲ್ಲಿಸಬೇಕಾದ ನಿಜವಾದ ಆರಾಧನೆ.</verse>
				<verse number="2">ಇಹಲೋಕದ ಆಚಾರವಿಚಾರಗಳಿಗೆ ಮಾರುಹೋಗಬೇಡಿ. ಬದಲಿಗೆ, ಮಾನಸಾಂತರಗೊಂಡು ನೂತನ ಜೀವಿಗಳಾಗಿ ಬಾಳಿರಿ. ಆಗ ನೀವು ದೇವರ ಚಿತ್ತಾನುಸಾರ ಯಾವುದು ಉತ್ತಮವಾದುದು, ಯಾವುದು ಉನ್ನತವಾದುದು, ಯಾವುದು ಉತ್ಕೃಷ್ಟವಾದುದು ಎಂಬುದನ್ನು ಅರಿತುಕೊಳ್ಳುವಿರಿ.</verse>
				<verse number="3">ದೇವರು ನನಗೆ ದಯಪಾಲಿಸಿರುವ ಸೇವೆಯ ನಿಮಿತ್ತ ನಾನು ನಿಮಗೆ ಹೇಳುವ ಬುದ್ಧಿಮಾತಿದು: ನಿಮ್ಮಲ್ಲಿ ಯಾರೂ ತನ್ನನ್ನೇ ಅತಿಯಾಗಿ ಭಾವಿಸಿಕೊಳ್ಳದಿರಲಿ. ದೇವರು ತನಗೆ ಇತ್ತಿರುವ ವಿಶ್ವಾಸದ ಪರಿಮಾಣದ ಮೇರೆಗೆ ಪ್ರತಿಯೊಬ್ಬನೂ ತನ್ನ ಬಗ್ಗೆ ಸರಿಯಾದ ಅಭಿಪ್ರಾಯ ಹೊಂದಿರಲಿ.</verse>
				<verse number="4">ನಮಗಿರುವುದು ಒಂದೇ ದೇಹ. ಆದರೂ ಅದರಲ್ಲಿ ಅನೇಕ ಅಂಗಗಳಿವೆ. ಈ ಅಂಗಗಳೆಲ್ಲವೂ ತಮ್ಮದೇ ಆದ ನಿರ್ದಿಷ್ಟಕಾರ್ಯವನ್ನು ನಿರ್ವಹಿಸುತ್ತವೆ.</verse>
				<verse number="5">ಅಂತೆಯೇ, ನಾವು ಅನೇಕ ಮಂದಿ ಇದ್ದರೂ ಕ್ರಿಸ್ತಯೇಸುವಿನಲ್ಲಿ ನಾವೆಲ್ಲರೂ ಒಂದೇ ದೇಹವಾಗಿದ್ದೇವೆ. ಒಬ್ಬರಿಗೊಬ್ಬರು ದೇಹದ ವಿವಿಧ ಅಂಗಗಳಂತೆ ಹೊಂದಿಕೊಂಡಿದ್ದೇವೆ.</verse>
				<verse number="6">ದೇವರು ಅನುಗ್ರಹಿಸಿರುವ ಪ್ರಕಾರ ನಾವು ಬೇರೆ ಬೇರೆ ವರಗಳನ್ನು ಹೊಂದಿದ್ದೇವೆ. ನಾವು ಹೊಂದಿರುವ ವರವು ಪ್ರವಾದನೆಯ ವರವಾಗಿದ್ದರೆ ನಮ್ಮ ವಿಶ್ವಾಸಕ್ಕೆ ಅನುಗುಣವಾಗಿ ಅದನ್ನು ಉಪಯೋಗಿಸಬೇಕು.</verse>
				<verse number="7">ಸೇವಕನು ಸೇವೆಯಲ್ಲಿಯೂ ಬೋಧಕನು ಬೋಧಿಸುವುದರಲ್ಲಿಯೂ</verse>
				<verse number="8">ಉಪದೇಶಕನು ಉಪದೇಶಿಸುವುದರಲ್ಲಿಯೂ ನಿರತನಾಗಿರಲಿ. ದಾನಮಾಡುವವನು ಧಾರಾಳವಾಗಿ ದಾನ ಮಾಡಲಿ. ಅಧಿಕಾರ ನಡೆಸುವವನು ನಿಷ್ಠೆಯಿಂದ ನಡೆಸಲಿ. ಕರುಣಾಪೂರಿತ ಕಾರ್ಯಗಳನ್ನು ಕೈಗೊಳ್ಳುವವನು ಹರ್ಷಚಿತ್ತನಾಗಿರಲಿ.</verse>
				<verse number="9">ನಿಮ್ಮ ಪ್ರೀತಿ ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿರಿ. ಒಳ್ಳೆಯದನ್ನು ಕೈಬಿಡದಿರಿ.</verse>
				<verse number="10">ಸಹೋದರ ಭಾವನೆಯಿಂದ ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿ ಪ್ರೀತಿಸಿರಿ. ಗೌರವ ತೋರಿಸುವುದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ.</verse>
				<verse number="11">ಪ್ರಭುವಿನ ಸೇವೆಯಲ್ಲಿ ಆಲಸಿಗಳಾಗದೆ ಅತ್ಯಾಸಕ್ತರಾಗಿರಿ.</verse>
				<verse number="12">ನಂಬಿಕೆ ನಿರೀಕ್ಷೆಯನ್ನು ಹೊಂದಿರುವ ನೀವು ಉಲ್ಲಾಸದಿಂದಿರಿ. ಸಂಕಟ ಬಂದಾಗ ಸಹನೆಯಿಂದಿರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.</verse>
				<verse number="13">ಕೊರತೆಯಲ್ಲಿರುವ ದೇವಜನರಿಗೆ ನೆರವು ನೀಡಿರಿ. ಅತಿಥಿಸತ್ಕಾರದಲ್ಲಿ ತತ್ಪರರಾಗಿರಿ.</verse>
				<verse number="14">ನಿಮ್ಮನ್ನು ಹಿಂಸಿಸುವವರನ್ನು ಆಶೀರ್ವದಿಸಿರಿ. ಹೌದು, ಶಪಿಸದೆ ಆಶೀರ್ವದಿಸಿರಿ.</verse>
				<verse number="15">ಸಂತೋಷಪಡುವವರೊಂದಿಗೆ ಸಂತೋಷಪಡಿರಿ; ದುಃಖಿಸುವವರೊಡನೆ ದುಃಖಿಸಿರಿ.</verse>
				<verse number="16">ನಿಮ್ಮನಿಮ್ಮಲ್ಲಿ ಸಾಮರಸ್ಯವಿರಲಿ. ದೊಡ್ಡಸ್ತಿಕೆಯಿಂದ ವರ್ತಿಸಬೇಡಿ. ದೀನದಲಿತರೊಡನೆ ಗೆಳೆತನ ಬೆಳೆಸಿರಿ. ನೀವೇ ಜಾಣರೆಂದು ಭಾವಿಸದಿರಿ.</verse>
				<verse number="17">ಕೇಡಿಗೆ ಪ್ರತಿಯಾಗಿ ಕೇಡನ್ನು ಮಾಡದಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಮಾನ್ಯವೋ ಅದನ್ನೇ ಮಾಡಿರಿ.</verse>
				<verse number="18">ಸಾಧ್ಯವಾದ ಮಟ್ಟಿಗೆ ಸರ್ವರೊಂದಿಗೂ ಸಮಾಧಾನದಿಂದ ಬಾಳಿರಿ.</verse>
				<verse number="19">ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸಬೇಡಿ. ಅದನ್ನು ದೇವರಿಗೇ ಬಿಟ್ಟುಬಿಡಿ. ಏಕೆಂದರೆ, “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ಎಲ್ಲರಿಗೂ ತಕ್ಕ ಪ್ರತಿಫಲವನ್ನು ಕೊಡುವವನು ನಾನೇ,” ಎಂಬ ಪ್ರಭುವಿನ ವಾಕ್ಯ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.</verse>
				<verse number="20">ಅದಕ್ಕೆ ಬದಲು, ನಿನ್ನ ಶತ್ರು ಹಸಿದಿದ್ದರೆ ಉಣಲು ಬಡಿಸು; ಬಾಯಾರಿದ್ದರೆ ಕುಡಿಯಲು ಕೊಡು. ಹೀಗೆ ಮಾಡುವುದರಿಂದ ಅವನ ತಲೆಯ ಮೇಲೆ ಉರಿಯುವ ಕೆಂಡಗಳನ್ನು ಸುರಿಸಿದಂತಾಗುವುದು.</verse>
				<verse number="21">ಕೇಡಿಗೆ ಸೋಲದೆ, ಒಳಿತಿನಿಂದ ಕೇಡನ್ನು ಸೋಲಿಸು.</verse>
			</chapter>
			<chapter number="13">
				<verse number="1">ಪ್ರತಿಯೊಬ್ಬನು ತನ್ನ ಮೇಲಿನ ಅಧಿಕಾರಿಗಳಿಗೆ ಅಧೀನನಾಗಿರಬೇಕು. ಅಧಿಕಾರವೆಲ್ಲವೂ ಬರುವುದು ದೇವರಿಂದಲೇ. ಈಗಿರುವ ಅಧಿಕಾರಿಗಳೂ ದೇವರಿಂದಲೇ ನೇಮಕಗೊಂಡವರು.</verse>
				<verse number="2">ಆದುದರಿಂದ ಅಧಿಕಾರವನ್ನು ವಿರೋಧಿಸುವವರು ದೇವರ ಆ ನೇಮಕವನ್ನೇ ವಿರೋಧಿಸುತ್ತಾರೆ. ಅಂಥವರು ಶಿಕ್ಷೆಗೆ ಗುರಿಯಾಗುತ್ತಾರೆ.</verse>
				<verse number="3">ಕೆಟ್ಟದ್ದನ್ನು ಮಾಡುವವನೇ ಹೊರತು ಒಳ್ಳೆಯದನ್ನು ಮಾಡುವವನು ಅಧಿಕಾರಿಗೆ ಭಯಪಡಬೇಕಾಗಿಲ್ಲ. ಅಧಿಕಾರಿಯ ಮುಂದೆ ನಿರ್ಭಯನಾಗಿರಲು ನಿನಗೆ ಇಷ್ಟವಿದ್ದರೆ ಒಳ್ಳೆಯದನ್ನೇ ಮಾಡುತ್ತಿರು. ಆಗ ಆತನು ನಿನ್ನನ್ನು ಪ್ರಶಂಶಿಸುವನು.</verse>
				<verse number="4">ಆತನು ನಿನ್ನ ಹಿತಕ್ಕಾಗಿ ದೇವರಿಂದ ನೇಮಕಗೊಂಡ ದಾಸನಾಗಿದ್ದಾನೆ. ಆದರೆ ನೀನು ಕೆಟ್ಟದ್ದನ್ನು ಮಾಡಿದೆ ಆದರೆ ಭಯಪಡಲೇಬೇಕು. ಏಕೆಂದರೆ, ಆತನ ಕೈಯಲ್ಲಿರುವ ಅಧಿಕಾರದಂಡವು ವ್ಯರ್ಥವಾದುದೇನೂ ಅಲ್ಲ. ದೇವರ ದಾಸನಾಗಿರುವ ಆತನು ಕೆಟ್ಟದ್ದನ್ನು ಮಾಡುವವರಿಗೆ ದೇವರದಂಡನೆಯನ್ನು ವಿಧಿಸುತ್ತಾನೆ.</verse>
				<verse number="5">ಆದ್ದರಿಂದ ನಿಮ್ಮ ಅಧಿಕಾರಿಗಳಿಗೆ ಅಧೀನರಾಗಿರಿ. ಕೇವಲ ದಂಡನೆಯನ್ನು ತಪ್ಪಿಸಿಕೊಳ್ಳುವ ಸಲುವಾಗಿ ಅಲ್ಲ, ನಿಮ್ಮ ಮನಸ್ಸಾಕ್ಷಿಯ ಸಲುವಾಗಿ.</verse>
				<verse number="6">ನೀವು ಕಂದಾಯವನ್ನು ಕಟ್ಟುತ್ತಿರುವುದೂ ಈ ಕಾರಣದಿಂದಲೇ. ಅಧಿಕಾರಿಗಳು ದೇವರ ದಾಸರು. ಅವರು ತಮ್ಮ ಪ್ರಸ್ತುತ ಕಾರ್ಯಗಳನ್ನು ನಿರ್ವಹಿಸುವಾಗ ದೇವರ ಸೇವೆಯನ್ನು ಮಾಡುತ್ತಾರೆ.</verse>
				<verse number="7">ಆದ್ದರಿಂದ ಸಲ್ಲಿಸಬೇಕಾದುದನ್ನು ಅವರಿಗೆ ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ವಿಧೇಯತೆಯೋ ಅವರಿಗೆ ವಿಧೇಯತೆಯನ್ನು, ಯಾರಿಗೆ ಗೌರವವೋ ಅವರಿಗೆ ಗೌರವವನ್ನು ಸಲ್ಲಿಸಿರಿ.</verse>
				<verse number="8">ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಋಣವೇ ಹೊರತು ಬೇರೆ ಯಾವ ವಿಧವಾದ ಋಣವೂ ನಿಮಗಿರಬಾರದು. ಏಕೆಂದರೆ ಪರರನ್ನು ಪ್ರೀತಿಸುವವನು ಧರ್ಮಶಾಸ್ತ್ರವನ್ನು ಪೂರ್ಣವಾಗಿ ನೆರವೇರಿಸಿದವನು.</verse>
				<verse number="9">“ವ್ಯಭಿಚಾರ ಮಾಡಬೇಡ, ಕೊಲಬೇಡ, ಕಳಬೇಡ, ದುರಾಶೆ ಪಡಬೇಡ,” - ಈ ಮುಂತಾದ ಆಜ್ಞೆಗಳೆಲ್ಲವೂ “ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನೂ ಪ್ರೀತಿಸು,” ಎಂಬ ಒಂದೇ ಆಜ್ಞೆಯಲ್ಲಿ ಅಡಗಿವೆ.</verse>
				<verse number="10">ಪ್ರೀತಿಯು ಪರರಿಗೆ ಕೇಡು ಬಗೆಯದು. ಆದಕಾರಣ ಪ್ರೀತಿಯೇ ಧರ್ಮಶಾಸ್ತ್ರದ ಪೂರೈಕೆ.</verse>
				<verse number="11">ಇದೆಂಥ ಕಾಲವೆಂದು ತಿಳಿದಿರುವ ನೀವು ಇದೆಲ್ಲವನ್ನು ಮಾಡಬೇಕು. ನಿದ್ರೆಯಿಂದ ಎಚ್ಚೆತ್ತುಕೊಳ್ಳುವ ವೇಳೆಯು ಸಮೀಪಿಸಿತು. ನಾವು ಕ್ರಿಸ್ತಯೇಸುವನ್ನು ವಿಶ್ವಾಸಿಸಲು ಆರಂಭಿಸಿದಾಗ ಇದ್ದುದಕ್ಕಿಂತಲೂ ಈಗ ನಮ್ಮ ಉದ್ಧಾರವು ಸಮೀಪವಾಗಿದೆ.</verse>
				<verse number="12">ಇರುಳು ಬಹುಮಟ್ಟಿಗೆ ಕಳೆಯಿತು. ಹಗಲು ಸಮೀಪಿಸಿತು. ಇನ್ನು ಅಂಧಕಾರಕ್ಕೆ ಅನುಗುಣವಾದ ದುಷ್ಕೃತ್ಯಗಳನ್ನು ತ್ಯಜಿಸಿಬಿಡೋಣ. ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.</verse>
				<verse number="13">ದುಂದೌತಣ - ಕುಡಿತಗಳಲ್ಲಾಗಲೀ, ಕಾಮವಿಲಾಸ-ನಿರ್ಲಜ್ಜಾಕೃತ್ಯಗಳಲ್ಲಾಗಲೀ, ಕಲಹ-ಮತ್ಸರಗಳಲ್ಲಾಗಲೀ ಕಾಲಕಳೆಯದೆ ಬೆಳಕಿನಲ್ಲಿ ಬಾಳುವವರಂತೆ ಸಭ್ಯರಾಗಿ ವರ್ತಿಸೋಣ.</verse>
				<verse number="14">ದೇಹದ ದುರಿಚ್ಛೆಗಳಿಗೆ ಬಲಿಯಾಗದೆ ಕ್ರಿಸ್ತಂಬರರಾಗಿರಿ.</verse>
			</chapter>
			<chapter number="14">
				<verse number="1">ವಿಶ್ವಾಸದಲ್ಲಿ ಸ್ಥಿರವಿಲ್ಲದವರನ್ನೂ ನಿಮ್ಮ ಸಂಗಡ ಸೇರಿಸಿಕೊಳ್ಳಿರಿ. ಆದರೆ ವೈಯಕ್ತಿಕ ಅಭಿಪ್ರಾಯಗಳ ಬಗ್ಗೆ ವಾಗ್ವಾದ ನಡೆಸಬೇಡಿ.</verse>
				<verse number="2">ಒಬ್ಬನು ಎಂಥ ಆಹಾರವನ್ನಾದರೂ ಭುಜಿಸಬಹುದೆಂದು ಭಾವಿಸುತ್ತಾನೆ. ವಿಶ್ವಾಸದಲ್ಲಿ ಸ್ಥಿರವಿಲ್ಲದವನು ಸಸ್ಯಾಹಾರಿ ಆಗಿಯೇ ಇರುತ್ತಾನೆ.</verse>
				<verse number="3">ಮಾಂಸಾಹಾರಿಯು ಸಸ್ಯಾಹಾರಿಯನ್ನು ಹೀನೈಸಬಾರದು; ಸಸ್ಯಾಹಾರಿಯು ಮಾಂಸಾಹಾರಿಯನ್ನು ದೋಷಿಯೆಂದು ತೀರ್ಪುಕೊಡಬಾರದು. ಏಕೆಂದರೆ, ಇಬ್ಬರೂ ದೇವರಿಂದ ಅಂಗೀಕೃತರು.</verse>
				<verse number="4">ಮತ್ತೊಬ್ಬನ ದಾಸನ ಮೇಲೆ ದಂಡನೆಯ ತೀರ್ಪುಕೊಡಲು ನೀನು ಯಾರು? ಅವನು ಸಮರ್ಥನು ಅಥವಾ ಅಸಮರ್ಥನು ಎಂದು ತೀರ್ಪುಕೊಡುವುದು ಅವನ ಯಜಮಾನನಿಗೆ ಸೇರಿದ್ದು. ಅವನು ಸಮರ್ಥನಾಗುವಂತೆ ಮಾಡಲು ಪ್ರಭು ಶಕ್ತರು.</verse>
				<verse number="5">ಒಂದು ದಿನಕ್ಕಿಂತ ಮತ್ತೊಂದು ದಿನ ಮಂಗಳಕರವಾದುದು ಎಂದು ಒಬ್ಬನು ಭಾವಿಸಬಹುದು. ಮತ್ತೊಬ್ಬನು, ಎಲ್ಲಾ ದಿನಗಳು ಮಂಗಳಕರವಾದುವು ಎಂದು ಹೇಳಬಹುದು. ಈ ವಿಷಯದಲ್ಲಿ ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಂತೆ ನಡೆಯಲಿ.</verse>
				<verse number="6">ಒಂದು ದಿನವನ್ನು ಮಂಗಳಕರವೆಂದು ಭಾವಿಸುವವನು ಪ್ರಭುವಿಗಾಗಿಯೇ ಆ ರೀತಿ ಭಾವಿಸುತ್ತಾನೆ. ಮಾಂಸವನ್ನು ತಿನ್ನುವವನು ಪ್ರಭುವಿಗಾಗಿಯೇ ತಿನ್ನುತ್ತಾನೆ. ಹೇಗೆಂದರೆ, ತಿನ್ನುವ ಆ ಪದಾರ್ಥಕ್ಕಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ. ಸಸ್ಯಾಹಾರಿಯೂ ಪ್ರಭುವಿಗಾಗಿಯೇ ಮಾಂಸವನ್ನು ತಿನ್ನದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತಾನೆ.</verse>
				<verse number="7">ನಮ್ಮಲ್ಲಿ ಯಾರೂ ತನಗಾಗಿಯೇ ಬದುಕುವುದಿಲ್ಲ; ತನಗಾಗಿಯೇ ಸಾಯುವುದಿಲ್ಲ. ನಾವು ಬದುಕಿದರೂ ಪ್ರಭುವಿಗಾಗಿಯೇ; ಸತ್ತರೂ ಅವರಿಗಾಗಿಯೇ.</verse>
				<verse number="8">ನಾವು ಬದುಕಿದರೂ ಸತ್ತರೂ ಪ್ರಭುವಿಗೆ ಸೇರಿದವರು.</verse>
				<verse number="9">ಏಕೆಂದರೆ, ಸತ್ತವರಿಗೂ ಬದುಕುವವರಿಗೂ ಪ್ರಭುವಾಗಬೇಕೆಂಬ ಉದ್ದೇಶದಿಂದಲೇ ಕ್ರಿಸ್ತಯೇಸು ಸತ್ತು ಜೀವಂತರಾದದ್ದು.</verse>
				<verse number="10">ಹೀಗಿರುವಲ್ಲಿ ಸಸ್ಯಾಹಾರಿಯೇ, ನೀನು ನಿನ್ನ ಸಹೋದರನನ್ನು ದೋಷಿಯೆಂದು ತೀರ್ಪಿಡುವುದೇಕೆ? ಮಾಂಸಹಾರಿಯೇ, ನಿನ್ನ ಸಹೋದರನನ್ನು ಹೀನೈಸುವುದೇಕೆ? ನಾವೆಲ್ಲರೂ ದೇವರ ನ್ಯಾಯಸ್ಥಾನದ ಮುಂದೆ ನಿಲ್ಲಬೇಕಲ್ಲವೆ?</verse>
				<verse number="11">ಪವಿತ್ರಗ್ರಂಥದಲ್ಲಿ: ಎಲ್ಲರೂ ನನಗೆ ಸಾಷ್ಟಾಂಗವೆರಗುವರು ಎಲ್ಲರೂ ನನ್ನನ್ನು ದೇವರೆಂದು ನಿವೇದಿಸುವರು ಇದಕ್ಕೆ ಜೀವಸ್ವರೂಪನಾದ ನಾನೇ ಸಾಕ್ಷಿ,” ಎಂದು ಸರ್ವೇಶ್ವರಸ್ವಾಮಿ ಹೇಳಿದ್ದಾರೆ.</verse>
				<verse number="12">ನಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕವನ್ನು ಒಪ್ಪಿಸಬೇಕು.</verse>
				<verse number="13">ಆದಕಾರಣ ಒಬ್ಬರ ವಿಷಯದಲ್ಲಿ ಒಬ್ಬರು ತೀರ್ಪುಮಾಡದೆ ಇರೋಣ. ಬದಲಾಗಿ ಸಹೋದರನಿಗೆ ಯಾವ ರೀತಿಯ ಅಡ್ಡಿಯನ್ನಾಗಲೀ ಅಡಚಣೆಗಳನ್ನಾಗಲೀ ಉಂಟುಮಾಡುವುದಿಲ್ಲವೆಂದು ತೀರ್ಮಾನಿಸಿಕೊಳ್ಳಿ.</verse>
				<verse number="14">ಯಾವ ಪದಾರ್ಥವು ಸ್ವತಃ ಅಶುದ್ಧವಲ್ಲವೆಂದು ಪ್ರಭುಯೇಸುವಿನಲ್ಲಿ ನಾನು ಖಚಿತವಾಗಿ ಹೇಳಬಲ್ಲೆ. ಆದರೆ, ಒಂದು ಪದಾರ್ಥವನ್ನು ಅಶುದ್ಧವೆಂದು ಯಾರಾದರೂ ಭಾವಿಸಿದರೆ ಅದು ಅವನಿಗೆ ಅಶುದ್ಧವೇ ಆಗುತ್ತದೆ.</verse>
				<verse number="15">ನೀನು ಏನನ್ನಾದರೂ ತಿನ್ನುವುದರಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾಗುವುದಾದರೆ ನಿನ್ನ ಆ ವರ್ತನೆ ಪ್ರೀತಿಪ್ರೇರಿತವಾದುದಲ್ಲ. ಯಾರಿಗೋಸ್ಕರ ಕ್ರಿಸ್ತಯೇಸು ಪ್ರಾಣಾರ್ಪಣೆ ಮಾಡಿದರೋ ಅಂಥವನಿಗೆ ನೀನು ತಿನ್ನುವ ಆಹಾರದಿಂದಾಗಿ ನಾಶವನ್ನು ತರಬಾರದು.</verse>
				<verse number="16">ನಿನಗೆ ರುಚಿಕರವಾದದ್ದು ಪರರಿಗೆ ದೂಷಣಾಸ್ಪದವಾಗದಿರಲಿ.</verse>
				<verse number="17">ಏಕೆಂದರೆ, ದೇವರ ಸಾಮ್ರಾಜ್ಯ ತಿನ್ನುವುದರಲ್ಲಿ, ಕುಡಿಯುವುದರಲ್ಲಿ ಅಲ್ಲ, ಪವಿತ್ರಾತ್ಮ ಅವರಿಂದ ಬರುವ ಸತ್ಸಂಬಂಧ, ಶಾಂತಿಸಮಾಧಾನ ಮತ್ತು ಸಂತೋಷ ಇವುಗಳಲ್ಲಿ ಅಡಗಿದೆ.</verse>
				<verse number="18">ಹೀಗೆ ಕ್ರಿಸ್ತಯೇಸುವಿಗೆ ಸೇವೆಮಾಡುವವನು, ದೇವರಿಂದ ಮೆಚ್ಚುಗೆಯನ್ನು ಮತ್ತು ಮನುಷ್ಯರಿಂದ ಮಾನ್ಯತೆಯನ್ನು ಪಡೆಯುತ್ತಾನೆ.</verse>
				<verse number="19">ಆದ್ದರಿಂದ ಶಾಂತಿಸಮಾಧಾನಕ್ಕೂ ಪರಸ್ಪರ ಅಭ್ಯುದಯಕ್ಕೂ ಹಿತಕರವಾದವುಗಳನ್ನೇ ಅರಸೋಣ.</verse>
				<verse number="20">ಕೇವಲ ಆಹಾರಕ್ಕಾಗಿ, ದೇವರು ಕಟ್ಟಿದ್ದನ್ನು ನೀನು ಕೆಡವಬೇಡ. ಆಹಾರಪದಾರ್ಥಗಳೆಲ್ಲಾ ಒಳ್ಳೆಯವೇ. ಆದರೆ ಅವುಗಳಲ್ಲಿ ಯಾವುದಾದರೂ ಒಂದನ್ನು ತಿನ್ನುವುದರಿಂದ ಮತ್ತೊಬ್ಬನಿಗೆ ವಿಘ್ನವನ್ನು ಒಡ್ಡುವುದಾದರೆ, ಅದು ತಪ್ಪು.</verse>
				<verse number="21">ಮಾಂಸವನ್ನು ತಿನ್ನುವುದಾಗಲಿ, ದ್ರಾಕ್ಷಾರಸವನ್ನು ಕುಡಿಯುವುದಾಗಲಿ, ಅಥವಾ ಇನ್ನಾವುದೇ ಆಗಲಿ, ನಿನ್ನ ಸಹೋದರನಿಗೆ ಪಾಪಕ್ಕೆ ಕಾರಣವಾಗುವುದಾದರೆ ಅದನ್ನು ಬಿಟ್ಟುಬಿಡುವುದೇ ಲೇಸು.</verse>
				<verse number="22">ಈ ವಿಷಯದಲ್ಲಿ ನಿನಗಿರುವ ವೈಯಕ್ತಿಕ ನಂಬಿಕೆ ದೇವರಿಗೆ ಮತ್ತು ನಿನಗೆ ಮಾತ್ರ ತಿಳಿದಿರಲಿ. ತಾನು ಅನುಮೋದಿಸಿ ಮಾಡಿದುದರ ಬಗ್ಗೆ ಅನುಮಾನಪಡದವನು ಧನ್ಯನು.</verse>
				<verse number="23">ಅನುಮಾನದಿಂದ ಊಟಮಾಡುವವನು ದೇವರ ಮುಂದೆ ಅಪರಾಧಿಯಾಗುತ್ತಾನೆ. ಏಕೆಂದರೆ, ಅವನು ವಿಶ್ವಾಸದ ಆಧಾರದ ಮೇಲೆ ವರ್ತಿಸುತ್ತಿಲ್ಲ. ವಿಶ್ವಾಸದ ಆಧಾರವಿಲ್ಲದೆ ಮಾಡುವುದೆಲ್ಲವೂ ಪಾಪವೇ.</verse>
			</chapter>
			<chapter number="15">
				<verse number="1">ವಿಶ್ವಾಸದಲ್ಲಿ ದೃಢವಾಗಿರುವ ನಾವು ನಮ್ಮ ಹಿತವನ್ನೇ ಬಯಸದೆ ವಿಶ್ವಾಸದಲ್ಲಿ ದೃಢವಲ್ಲದವರ ಲೋಪದೋಷಗಳನ್ನು ಸಹಿಸಿಕೊಳ್ಳಬೇಕು.</verse>
				<verse number="2">ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೇ ಬಯಸಿ, ವಿಶ್ವಾಸದಲ್ಲಿ ಅವನು ಮತ್ತಷ್ಟು ಪ್ರವರ್ಧಿಸುವಂತೆ ನೆರವಾಗಬೇಕು.</verse>
				<verse number="3">ಕ್ರಿಸ್ತಯೇಸು ತಮ್ಮ ಸ್ವಂತ ಹಿತವನ್ನು ಎಂದಿಗೂ ಬಯಸಲಿಲ್ಲ. “ದೇವರೇ, ನಿಮ್ಮನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೆ ಎರಗಿವೆ,” ಎಂದು ಲಿಖಿತವಾಗಿರುವ ವಾಕ್ಯ ಅವರಿಗೆ ಅನ್ವಯಿಸುತ್ತದೆ.</verse>
				<verse number="4">ಪ್ರಾಚೀನ ಗ್ರಂಥಗಳಲ್ಲಿ ಬರೆದಿರುವುದೆಲ್ಲವೂ ನಮ್ಮ ಉಪದೇಶಕ್ಕಾಗಿಯೇ ಬರೆಯಲಾಗಿದೆ. ಪವಿತ್ರಗ್ರಂಥ ಪಠನದಿಂದ ದೊರಕುವ ಸ್ಥೈರಣೆ ಮತ್ತು ಉತ್ತೇಜನದಿಂದಾಗಿ ನಾವು ನಿರೀಕ್ಷೆಯುಳ್ಳವರಾಗಬೇಕೆಂದೇ ಇವೆಲ್ಲಾ ಬರೆಯಲಾಗಿದೆ.</verse>
				<verse number="5">ಆ ಸ್ಥೈರಣೆ ಮತ್ತು ಉತ್ತೇಜನದ ಮೂಲವಾಗಿರುವ ದೇವರು, ನೀವೆಲ್ಲರು ಕ್ರಿಸ್ತಯೇಸುವನ್ನು ಅನುಸರಿಸುತ್ತಾ ಒಮ್ಮನಸ್ಸಿನಿಂದ ಬಾಳುವಂತೆ ಮಾಡಲಿ.</verse>
				<verse number="6">ಹೀಗೆ ಒಮ್ಮನಸ್ಸಿನಿಂದಲೂ ಒಕ್ಕೊರಲಿನಿಂದಲೂ ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರನ್ನು ಕೊಂಡಾಡುವಂತಾಗಲಿ.</verse>
				<verse number="7">ಕ್ರಿಸ್ತಯೇಸು ನಿಮ್ಮನ್ನು ಅಂಗೀಕರಿಸಿದಂತೆ ದೇವರ ಮಹಿಮೆಗಾಗಿ ನೀವು ಸಹ ಒಬ್ಬರನ್ನು ಒಬ್ಬರು ಅಂಗೀಕರಿಸಿರಿ.</verse>
				<verse number="8">ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳನ್ನು ನೆರವೇರಿಸಿ ತಮ್ಮ ಪ್ರಾಮಾಣಿಕತೆಯನ್ನು ವ್ಯಕ್ತಪಡಿಸುವಂತೆ</verse>
				<verse number="9">ಮತ್ತು ದೇವರು ತೋರಿದ ಕರುಣೆಗಾಗಿ ಅವರನ್ನು ಯೆಹೂದ್ಯರಲ್ಲದವರು ಸಹ ಸ್ತುತಿಸಲು ಸಾಧ್ಯವಾಗುವಂತೆ ಕ್ರಿಸ್ತಯೇಸು ಯೆಹೂದ್ಯರಿಗೆ ಅಧೀನರಾದರು. ಇದಕ್ಕೆ ಸಾದೃಶ್ಯವಾಗಿ ಪವಿತ್ರಗ್ರಂಥದಲ್ಲಿ ಹೀಗೆಂದು ಹೇಳಲಾಗಿದೆ: “ಈ ಕಾರಣದಿಂದ ನಾನು ಯೆಹೂದ್ಯರಲ್ಲದವರ ನಡುವೆ ನಿಮ್ಮನ್ನು ಕೊಂಡಾಡುವೆನು ನಿಮ್ಮ ನಾಮವನು ಸಂಕೀರ್ತಿಸುವೆನು.”</verse>
				<verse number="10">ಇನ್ನೊಂದು ಕಡೆ: ಅನ್ಯಧರ್ಮೀಯರೇ, ದೇವಜನರೊಡನೆ ಸೇರಿ ಆನಂದಿಸಿರಿ.”</verse>
				<verse number="11">ಮತ್ತೊಂದು ಕಡೆ: “ಅನ್ಯಧರ್ಮೀಯರೇ, ನೀವೆಲ್ಲರೂ ಪ್ರಭುವನ್ನು ಸ್ತುತಿಸಿರಿ ಸರ್ವಜನಾಂಗಗಳೇ, ಅವರನ್ನು ಹೊಗಳಿ ಹಾಡಿರಿ,”</verse>
				<verse number="12">ಮಗದೊಂದು ಕಡೆ ಯೆಶಾಯನು ಹೀಗೆನ್ನುತ್ತಾನೆ: “ಜೆಸ್ಸೆಯನ ವಂಶಜನು ಬರುವನು ಅನ್ಯಜನಾಂಗಗಳನ್ನು ಆಳುವವನು ಉದಯಿಸುವನು ಆ ಜನಾಂಗಗಳು ಆತನಲ್ಲೇ ಭರವಸೆಯನ್ನಿಡುವುವು.”</verse>
				<verse number="13">ಭರವಸೆಯ ಮೂಲವಾಗಿರುವ ದೇವರಲ್ಲಿರುವ ನಮ್ಮ ವಿಶ್ವಾಸದ ಮೂಲಕ ಲಭಿಸುವ ಆನಂದವನ್ನೂ ಶಾಂತಿಸಮಾಧಾನವನ್ನೂ ನಿಮಗೆ ಸಮೃದ್ಧಿಯಾಗಿ ದಯಪಾಲಿಸಲಿ. ನಿಮ್ಮ ಭರವಸೆ ಪವಿತ್ರಾತ್ಮ ಅವರ ಪ್ರಭಾವದಿಂದ ಪ್ರವರ್ಧಿಸುವಂತಾಗಲಿ.</verse>
				<verse number="14">ಸಹೋದರರೇ, ನೀವು ಗುಣಸಂಪನ್ನರೂ ಜ್ಞಾನಸಂಪನ್ನರೂ ಒಬ್ಬರಿಗೊಬ್ಬರು ಬುದ್ಧಿಹೇಳಿಕೊಳ್ಳಲು ಸಮರ್ಥರೂ ಆಗಿದ್ದೀರಿ ಎಂದು ನಾನು ಚೆನ್ನಾಗಿ ಬಲ್ಲೆ.</verse>
				<verse number="15">ಆದರೂ ಕೆಲವು ವಿಷಯಗಳತ್ತ ನಿಮ್ಮ ಗಮನ ಸೆಳೆಯುವ ಉದ್ದೇಶದಿಂದ ಅಲ್ಲಲ್ಲಿ ಹೆಚ್ಚಿನ ಧೈರ್ಯವಹಿಸಿ ಬರೆದಿದ್ದೇನೆ. ದೇವರು ನನಗೆ ದಯಪಾಲಿಸಿರುವ ವಿಶೇಷ ವರದಾನದಿಂದಾಗಿ ಈ ಪ್ರಕಾರ ಬರೆದಿದ್ದೇನೆ.</verse>
				<verse number="16">ಈ ವರದಿಂದಲೇ ಯೆಹೂದ್ಯರಲ್ಲದ ಜನರಿಗೆ ನಾನು ಕ್ರಿಸ್ತಯೇಸುವಿನ ದಾಸನಾದೆ. ಯೆಹೂದ್ಯರಲ್ಲದವರು ಪವಿತ್ರಾತ್ಮರ ಮೂಲಕ ಪರಿಶುದ್ಧರಾಗಿ, ದೇವರಿಗೆ ಸಮರ್ಪಕ ಕಾಣಿಕೆಯಾಗುವಂತೆ ದೇವರ ಶುಭಸಂದೇಶವನ್ನು ಸಾರುವುದೇ ನನ್ನ ಪೂಜ್ಯಸೇವೆ, ಅದುವೇ ನನ್ನ ಯಾಜಕಸೇವೆ.</verse>
				<verse number="17">ದೇವರಿಗಾಗಿ ಸಲ್ಲಿಸುವ ಈ ಸೇವೆಯನ್ನು ಕುರಿತು ನಾನು ಕ್ರಿಸ್ತಯೇಸುವಿನಲ್ಲಿ ಹೆಮ್ಮೆಪಡಲು ಕಾರಣ ಉಂಟು.</verse>
				<verse number="18">ಕ್ರಿಸ್ತಯೇಸು ನನ್ನ ಮುಖಾಂತರ ಅಂದರೆ, ನನ್ನ ಬೋಧನೆ ಹಾಗು ಸಾಧನೆಗಳ ಮೂಲಕ, ಸೂಚಕ ಹಾಗೂ ಅದ್ಭುತಕಾರ್ಯಗಳ ಮೂಲಕ ಮತ್ತು ಪವಿತ್ರಾತ್ಮರ ಶಕ್ತಿಯ ಮೂಲಕ ಯೆಹೂದ್ಯರಲ್ಲದವರನ್ನೂ ತಮ್ಮ ಶರಣರನ್ನಾಗಿಸಿಕೊಂಡಿದ್ದಾರೆ. ಇದೊಂದನ್ನು ಬಿಟ್ಟು ಬೇರೆ ಯಾವುದನ್ನು ಕುರಿತು ಹೊಗಳಿಕೊಳ್ಳಲು ನಾನು ಧೈರ್ಯಗೊಳ್ಳುವುದಿಲ್ಲ.</verse>
				<verse number="19">ಜೆರುಸಲೇಮಿನಿಂದ ಪ್ರಾರಂಭಿಸಿ ಇಲ್ಲುರಿಕ ಪ್ರಾಂತ್ಯದವರೆಗೂ ಸುತ್ತಮುತ್ತಿನಲ್ಲೂ ನಾನು ಸಂಚಾರಮಾಡಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಪೂರ್ತಿಯಾಗಿ ಪ್ರಚಾರಮಾಡಿದ್ದೇನೆ.</verse>
				<verse number="20">ಮತ್ತೊಬ್ಬನು ಹಾಕಿದ ಅಸ್ತಿವಾರದ ಮೇಲೆ ನಾನು ಕಟ್ಟುವುದು ಸರಿ ಅಲ್ಲವೆಂಬುದು ನನ್ನ ಅಭಿಪ್ರಾಯ. ಆದಕಾರಣ ಕ್ರಿಸ್ತಯೇಸುವಿನ ನಾಮವು ಪ್ರಚಾರವಾಗದಕಡೆ ಹೋಗಿ ಶುಭಸಂದೇಶವನ್ನು ಸಾರಬೇಕೆಂಬುದೇ ನನ್ನ ಆಕಾಂಕ್ಷೆ.</verse>
				<verse number="21">“ಯಾರಿಗೆ ಆತನ ಸುದ್ದಿ ಮುಟ್ಟಿಲ್ಲವೋ ಅವರು ಆತನನು ನೋಡುವರು; ಯಾರು ಆತನ ವರ್ತಮಾನ ಕೇಳಿಲ್ಲವೋ ಅವರು ಆತನನು ಗ್ರಹಿಸಿಕೊಳ್ಳುವರು,” ಎಂಬುದಾಗಿ ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ನನ್ನ ಕಾರ್ಯವನ್ನು ನಡೆಸಿದ್ದೇನೆ.</verse>
				<verse number="22">ಈ ಕಾರಣದಿಂದಲೇ ನಾನು ನಿಮ್ಮ ಬಳಿಗೆ ಬರಲು ಅನೇಕ ಸಾರಿ ಮಾಡಿದ ಪ್ರಯತ್ನಗಳು ವಿಫಲವಾದವು.</verse>
				<verse number="23">ಆದರೆ ಈಗ ಈ ಪ್ರಾಂತ್ಯಗಳಲ್ಲಿ ನಾನು ಮಾಡಬೇಕಾಗಿದ್ದ ಸೇವೆಯನ್ನು ಮುಗಿಸಿದ್ದೇನೆ. ಅನೇಕ ವರ್ಷಗಳಿಂದ ನಿಮ್ಮ ಬಳಿಗೆ ಬರಬೇಕೆಂದಿದ್ದ ನನ್ನ ಹಂಬಲವು ಈಗ ಕೈಗೂಡಲಿದೆ.</verse>
				<verse number="24">ನಾನು ಸ್ಪೇಯಿನ್ ದೇಶಕ್ಕೆ ಹೋಗುವ ಮಾರ್ಗದಲ್ಲಿ ಮೊದಲು ನಿಮ್ಮನ್ನು ಕಾಣಬೇಕೆಂದಿದ್ದೇನೆ. ಸ್ವಲ್ಪಕಾಲ ನಿಮ್ಮೊಡನೆ ಸಂತೋಷವಾಗಿ ತಂಗಿದ್ದು ಬಳಿಕ ನಿಮ್ಮ ಸಹಾಯದಿಂದ ಆ ದೇಶಕ್ಕೆ ಪ್ರಯಾಣವನ್ನು ಮುಂದುವರಿಸುತ್ತೇನೆ.</verse>
				<verse number="25">ಸದ್ಯಕ್ಕೆ ನಾನು ಜೆರುಸಲೇಮಿನಲ್ಲಿರುವ ದೇವಜನರಿಗೆ ಸಹಾಯಧನವನ್ನು ಕೊಂಡೊಯ್ಯಬೇಕಾಗಿದೆ.</verse>
				<verse number="26">ಅಲ್ಲಿನ ದೇವಜನರಲ್ಲಿ ಬಡವರಾದವರಿಗೆ ಸಹಾಯನೀಡಲು ಮಕೆದೋನಿಯ ಮತ್ತು ಅಖಾಯದ ಸಹೋದರರು ಮುಂದೆ ಬಂದಿದ್ದಾರೆ.</verse>
				<verse number="27">ಅವರ ಸ್ವಂತ ಇಷ್ಟದಿಂದಲೇ ಮುಂದೆ ಬಂದಿದ್ದಾರೆ. ಹಾಗೆ ಮಾಡುವುದು ಅವರ ಕರ್ತವ್ಯವೂ ಹೌದು. ಏಕೆಂದರೆ, ಯೆಹೂದ್ಯರ ಆಧ್ಯಾತ್ಮಿಕ ಸಂಪತ್ತಿನಲ್ಲಿ ಪಾಲುಗಾರರಾಗಿರುವ ಅನ್ಯಧರ್ಮೀಯರು ತಮ್ಮ ಐಹಿಕಸಂಪತ್ತಿನಲ್ಲಿ ಅವರಿಗೆ ಪಾಲು ನೀಡಲು ಕರ್ತವ್ಯಬದ್ಧರಾಗಿದ್ದಾರೆ.</verse>
				<verse number="28">ದೇವಜನರಿಗೆ ಸಂಗ್ರಹಿಸಲಾದ ಧನಸಹಾಯವನ್ನು ಸುರಕ್ಷಿತವಾಗಿ ಅವರಿಗೆ ತಲುಪಿಸಿದ ಮೇಲೆ ನನ್ನ ಈ ಕಾರ್ಯವನ್ನು ಮುಗಿಸಿಕೊಂಡು ಸ್ಪೇಯಿನ್ ದೇಶಕ್ಕೆ ಹೋಗುವ ಮಾರ್ಗದಲ್ಲಿ ನಿಮ್ಮ ಬಳಿಗೆ ಬರುತ್ತೇನೆ.</verse>
				<verse number="29">ಹಾಗೆ ಬರುವಾಗ ನಿಮಗೆ ಕ್ರಿಸ್ತಯೇಸುವಿನ ಅಮೂಲ್ಯ ಆಶೀರ್ವಾದವನ್ನು ಹೇರಳವಾಗಿ ತರುತ್ತೇನೆಂಬ ಭರವಸೆ ನನಗಿದೆ.</verse>
				<verse number="30">ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲೂ ಪವಿತ್ರಾತ್ಮ ಪ್ರೇರಿತವಾದ ಪ್ರೀತಿಯಿಂದಲೂ ನಾನು ನಿಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ: ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸಿ ನನ್ನ ಹೋರಾಟದಲ್ಲಿ ಸಹಕರಿಸಿರಿ.</verse>
				<verse number="31">ಜುದೇಯದಲ್ಲಿರುವ ಅವಿಶ್ವಾಸಿಗಳ ಕೈಯಿಂದ ನಾನು ಪಾರಾಗುವಂತೆ ಪ್ರಾರ್ಥಿಸಿರಿ; ಜೆರುಸಲೇಮಿನ ದೇವಜನರು ನನ್ನ ಸೇವೆಯನ್ನು ಸಂತೋಷದಿಂದ ಸ್ವೀಕರಿಸುವಂತೆ ಪ್ರಾರ್ಥಿಸಿರಿ.</verse>
				<verse number="32">ಅನಂತರ ದೇವರ ಚಿತ್ತವಾದಲ್ಲಿ ನಾನು ಸಂತೋಷದಿಂದ ನಿಮ್ಮಲ್ಲಿ ಬರುತ್ತೇನೆ. ನಿಮ್ಮ ಸಂಗಡವಿದ್ದು ವಿಶ್ರಾಂತಿಪಡೆಯುತ್ತೇನೆ.</verse>
				<verse number="33">ಶಾಂತಿದಾತ ದೇವರು ನಿಮ್ಮೆಲ್ಲರೊಡನೆ ಇರಲಿ! ಆಮೆನ್.</verse>
			</chapter>
			<chapter number="16">
				<verse number="1">ನಾನು ನಿಮ್ಮ ಬಳಿಗೆ ಕಳುಹಿಸುತ್ತಿರುವ ಸಹೋದರಿ ಫೊಯಿಬೆಯನ್ನು ಪ್ರೀತಿಯಿಂದ ಸ್ವಾಗತಿಸಿರಿ. ಈಕೆ ಕೆಂಕ್ರೆಯ ಪಟ್ಟಣದ ಸಭಾಸೇವಕಳು.</verse>
				<verse number="2">ದೇವಜನರ ಯೋಗ್ಯತೆಗೆ ತಕ್ಕಂತೆ ಈಕೆಯನ್ನು ಪ್ರಭುವಿನ ಹೆಸರಿನಲ್ಲಿ ಬರಮಾಡಿಕೊಳ್ಳಿ. ನನಗೂ ಅನೇಕರಿಗೂ ನೆರವು ನೀಡಿರುವ ಈಕೆಗೆ ನಿಮ್ಮಿಂದಾದ ಎಲ್ಲಾ ಸಹಾಯವನ್ನು ಮಾಡಿ.</verse>
				<verse number="3">ಕ್ರಿಸ್ತಯೇಸುವಿನ ಸೇವೆಯಲ್ಲಿ ನನ್ನ ಸಹೋದ್ಯೋಗಿಗಳಾದ ಪ್ರಿಸಿಲ್ಲಳಿಗೂ ಅಕ್ವಿಲನಿಗೂ ನನ್ನ ವಂದನೆಗಳನ್ನು ತಿಳಿಸಿರಿ.</verse>
				<verse number="4">ಅವರು ನನ್ನ ಪ್ರಾಣರಕ್ಷಣೆಗಾಗಿ ತಮ್ಮ ಪ್ರಾಣಗಳನ್ನೇ ಅಪಾಯಕ್ಕೆ ಈಡಾಗಿಸಿದವರು. ಅದಕ್ಕಾಗಿ ನಾನು ಅವರಿಗೆ ಚಿರಋಣಿ. ನಾನು ಮಾತ್ರವಲ್ಲ, ಯೆಹೂದ್ಯೇತರ ಸಭೆಗಳ ಎಲ್ಲರೂ ಅವರು ಮಾಡಿದ ಉಪಕಾರಕ್ಕೆ ಚಿರಋಣಿಗಳಾಗಿದ್ದಾರೆ.</verse>
				<verse number="5">ಅವರ ಮನೆಯಲ್ಲಿ ಸೇರುವ ಸಭೆಗೂ ನನ್ನ ಶುಭಾಶಯಗಳು. ನನ್ನ ಆಪ್ತಗೆಳೆಯ ಎಪೈನೆತನಿಗೆ ನನ್ನ ಪ್ರಣಾಮಗಳು; ಏಷ್ಯಾಸೀಮೆಯಲ್ಲಿ ಮೊತ್ತಮೊದಲಿಗೆ ಕ್ರಿಸ್ತಯೇಸುವನ್ನು ವಿಶ್ವಾಸಿಸಿದವನು ಆತನೇ.</verse>
				<verse number="6">ನಿಮಗಾಗಿ ಬಹಳ ಶ್ರಮವಹಿಸಿದ ಮರಿಯಳಿಗೂ ನನ್ನ ನಮಸ್ಕಾರಗಳು.</verse>
				<verse number="7">ನನ್ನ ಸ್ವದೇಶೀಯರೂ ನನ್ನೊಡನೆ ಸೆರೆಯಲ್ಲಿ ಇದ್ದವರೂ ಆದ ಅಂದ್ರೋನಿಕನಿಗೂ ಯೂನ್ಯನಿಗೂ ನನ್ನ ನಮನಗಳು. ಅವರು ಪ್ರೇಷಿತರಂತೆ ಸನ್ಮಾನಿತರು; ಕ್ರಿಸ್ತಯೇಸುವನ್ನು ವಿಶ್ವಾಸಿಸುವುದರಲ್ಲಿ ನನಗಿಂತಲೂ ಮೊದಲಿಗರು.</verse>
				<verse number="8">ಪ್ರಭುವಿನಲ್ಲಿ ನನ್ನ ಆಪ್ತಗೆಳೆಯನಾದ ಅಂಪ್ಲಿಯಾತನಿಗೆ ನನ್ನ ವಂದನೆಗಳು.</verse>
				<verse number="9">ಯೇಸುಕ್ರಿಸ್ತರ ಸೇವೆಯಲ್ಲಿ ನನ್ನ ಸಹೋದ್ಯೋಗಿಯಾದ ಉರ್ಬಾನನಿಗೂ ನನ್ನ ಮಿತ್ರ ಸ್ತಾಕುನಿಗೂ ವಂದನೆಗಳು.</verse>
				<verse number="10">ಕ್ರಿಸ್ತಯೇಸುವಿನ ಸೇವೆಯಲ್ಲಿ ಪರಿಷ್ಕೃತನಾದ ಅಪೆಲ್ಲನಿಗೆ ಮತ್ತು ಅರಿಸ್ತೊಬೂಲನ ಕುಟುಂಬದವರಿಗೆ ನನ್ನ ನೆನಪುಗಳು.</verse>
				<verse number="11">ನನ್ನ ಸ್ವದೇಶೀಯರಾದ ಹೆರೋಡಿಯೊನನಿಗೂ ನಾರ್ಕಿಸ್ಸನ ಕುಟುಂಬದವರಲ್ಲಿ ಕ್ರೈಸ್ತರಾದವರಿಗೂ ನನ್ನ ವಂದನೆಗಳು.</verse>
				<verse number="12">ಪ್ರಭು ಸೇವೆಯಲ್ಲಿ ನಿರತರಾದ ತ್ರುಫೈನಳಿಗೂ ತ್ರುಫೋಸಳಿಗೂ ಮತ್ತು ಪ್ರಭುವಿಗಾಗಿ ಶ್ರದ್ಧೆಯಿಂದ ಸೇವೆಸಲ್ಲಿಸಿದ ಪ್ರಿಯ ಪೆರ್ಸಿಸಳಿಗೂ ನನ್ನ ನೆನಕೆಗಳು.</verse>
				<verse number="13">ಪ್ರಭುವಿನ ಭಕ್ತರಲ್ಲಿ ಹೆಸರುವಾಸಿಯಾದ ರೂಫನಿಗೂ ನನ್ನನ್ನು ಸ್ವಂತ ಮಗನಂತೆ ನೋಡಿಕೊಂಡ ಅವರ ತಾಯಿಗೂ ನನ್ನ ವಂದನೆಗಳು.</verse>
				<verse number="14">ಅಸುಂಕ್ರಿತನಿಗೂ ಫ್ಲೆಗೋನನಿಗೂ ಹೆರ್ಮೇಯನಿಗೂ ಪತ್ರೊಬನಿಗೂ ಹೆರ್ಮಾನನಿಗೂ ಮತ್ತು ಅವರೊಡನಿರುವ ಸಹೋದರರೆಲ್ಲರಿಗೂ ನನ್ನ ವಂದನೆಗಳು.</verse>
				<verse number="15">ಫಿಲೊಲೋಗನಿಗೂ ಯೂಲ್ಯಳಿಗೂ ನೇರ್ಯನಿಗೂ ಅವನ ತಂಗಿಗೂ ಒಲುಂಪನಿಗೂ ಮತ್ತು ಇವರೊಂದಿಗೆ ಇರುವ ದೇವಜನರೆಲ್ಲರಿಗೂ ನನ್ನ ವಂದನೆಗಳು.</verse>
				<verse number="16">ಪವಿತ್ರವಾದ ಮುದ್ದನ್ನಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಎಲ್ಲಾ ಕ್ರೈಸ್ತಸಭೆಗಳವರು ನಿಮಗೆ ತಮ್ಮ ವಂದನೆಗಳನ್ನು ಕಳುಹಿಸಿದ್ದಾರೆ.</verse>
				<verse number="17">ಸಹೋದರರೇ, ನೀವು ಪಡೆದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರ ಸಹವಾಸವನ್ನೇ ಮಾಡಬೇಡಿರೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.</verse>
				<verse number="18">ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.</verse>
				<verse number="19">ನೀವು ಶುಭಸಂದೇಶಕ್ಕೆ ವಿಧೇಯರಾಗಿ ನಡೆಯುವವರೆಂಬ ಸಮಾಚಾರ ಎಲ್ಲೆಲ್ಲೂ ಹರಡಿದೆ. ಇದರಿಂದಾಗಿ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ನೀವು ಒಳ್ಳೆಯ ವಿಷಯದಲ್ಲಿ ಜಾಣರೂ ಕೆಟ್ಟ ವಿಷಯದಲ್ಲಿ ಕಳಂಕರಹಿತರೂ ಆಗಿರಬೇಕು.</verse>
				<verse number="20">ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!</verse>
				<verse number="21">ನನ್ನ ಸಹೋದ್ಯೋಗಿಯಾದ ತಿಮೊಥೇಯನು ಮತ್ತು ನನ್ನ ಸ್ವದೇಶೀಯರಾದ ಲೂಕ್ಯ, ಯಾಸೋನನು, ಸೋಸಿಪತ್ರನು ಇವರುಗಳು ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.</verse>
				<verse number="22">ಈ ಪತ್ರವನ್ನು ಬರೆದುಕೊಟ್ಟ ತೆರ್ತ್ಯನೆಂಬ ನಾನೂ ನಿಮ್ಮನ್ನು ಪ್ರಭುವಿನಲ್ಲಿ ವಂದಿಸುತ್ತೇನೆ.</verse>
				<verse number="23">ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರ ನೀಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾಂಚಿ ಎರಸ್ತನೂ ಸಹೋದರ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳಿದ್ದಾರೆ.</verse>
				<verse number="24">ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೆಲ್ಲರೊಡನೆ ಇರಲಿ! ಆಮೆನ್.</verse>
				<verse number="25">“ಅನಾದಿಯಿಂದಲೂ ಗುಪ್ತವಾಗಿದ್ದ ರಹಸ್ಯವು ಈಗ ಪ್ರಕಟವಾಗಿದೆ. ಶಾಶ್ವತ ದೇವರ ಆಜ್ಞೆಯ ಮೇರೆಗೆ ಅನ್ಯಧರ್ಮೀಯರೂ ವಿಧೇಯರಾಗಿ ವಿಶ್ವಾಸಿಸುವಂತೆ ಪ್ರವಾದನಾ ಗ್ರಂಥಗಳ ಮೂಲಕ ಆ ರಹಸ್ಯವನ್ನು ಈಗ ಅವರಿಗೆ ತಿಳಿಸಲಾಗುತ್ತಿದೆ.</verse>
				<verse number="26">ಇದನ್ನು ಬೆಳಕಿಗೆ ತರುವ ನನ್ನ ಸಂದೇಶದ ಮೂಲಕ ಮತ್ತು ಯೇಸುಕ್ರಿಸ್ತರನ್ನು ಕುರಿತ ಬೋಧನೆಯ ಮೂಲಕ ದೇವರು ನಿಮ್ಮನ್ನು ವಿಶ್ವಾಸದಲ್ಲಿ ದೃಢಪಡಿಸಲು ಶಕ್ತರು.</verse>
				<verse number="27">ಜ್ಞಾನಾಂಬುದಿಯಾದ ಆ ಏಕೈಕ ದೇವರಿಗೆ ಯೇಸುಕ್ರಿಸ್ತರ ಮುಖಾಂತರ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.</verse>
			</chapter>
		</book>
		<book number="46">
			<chapter number="1">
				<verse number="1">ಕ್ರಿಸ್ತಯೇಸುವಿನಲ್ಲಿ ಪುನೀತರಾಗಿ ದೇವಜನರಾಗಲು ಕರೆಹೊಂದಿರುವ ಕೊರಿಂಥದ ಶ್ರೀಸಭೆಯವರಿಗೂ ಹಾಗೂ ಪ್ರಭು ಯೇಸುಕ್ರಿಸ್ತರನ್ನು ಎಲ್ಲೆಡೆಯೂ ನಾಮಸ್ಮರಣೆ ಮಾಡುವ ಸರ್ವಜನರಿಗೂ - ದೇವರ‍ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಲು ಕರೆಹೊಂದಿದ ಪೌಲನಾದ ನಾನು ಸಹೋದರ ಸೊಸ್ಥೆನನೊಂದಿಗೆ ಸೇರಿ ಬರೆಯುವ ಪತ್ರ.</verse>
				<verse number="2">ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.</verse>
				<verse number="3">ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸುಕ್ರಿಸ್ತರಿಂದಲೂ ನಿಮಗೆ ಅನುಗ್ರಹ ಮತ್ತು ಶಾಂತಿಸಮಾಧಾನ ಲಭಿಸಲಿ!</verse>
				<verse number="4">ಕ್ರಿಸ್ತಯೇಸುವಿನಲ್ಲಿ ನಿಮಗೆ ಕೊಡಲಾಗಿರುವ ದೇವಾನುಗ್ರಹದ ಸಲುವಾಗಿ ನಾನು ನಿಮಗೋಸ್ಕರ ನನ್ನ ದೇವರಿಗೆ ಸತತವಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.</verse>
				<verse number="5">ಏಕೆಂದರೆ, ಕ್ರಿಸ್ತಯೇಸುವಿನಲ್ಲಿ ನೀವು ಎಲ್ಲ ದೃಷ್ಟಿಯಿಂದಲೂ ಶ್ರೀಮಂತರು, ಜ್ಞಾನಸಂಪನ್ನರು ಮತ್ತು ವಾಕ್‍ಚತುರರು ಆಗಿದ್ದೀರಿ.</verse>
				<verse number="6">ಇದಲ್ಲದೆ, ಕ್ರಿಸ್ತಯೇಸುವನ್ನು ಕುರಿತ ಸಾಕ್ಷ್ಯವು ನಿಮ್ಮಲ್ಲಿ ನೆಲೆಗೊಂಡಿದೆ.</verse>
				<verse number="7">ಇದರಿಂದಾಗಿ ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷವಾಗುವುದನ್ನೇ ಎದುರುನೋಡುತ್ತಿರುವ ನಿಮಗೆ ಯಾವ ಕೃಪಾಶೀರ್ವಾದಗಳ ಕೊರತೆಯು ಇಲ್ಲ.</verse>
				<verse number="8">ನಮ್ಮ ಪ್ರಭು ಯೇಸುಕ್ರಿಸ್ತರ ದಿನದಂದು ನೀವು ನಿರ್ದೋಷಿಗಳಾಗಿರುವಂತೆ ಆ ದೇವರೇ, ನಿಮ್ಮನ್ನು ಕಡೆಯವರೆಗೂ ಸ್ಥಿರವಾಗಿ ಕಾಪಾಡುವರು.</verse>
				<verse number="9">ತಮ್ಮ ಪುತ್ರನೂ ನಮ್ಮ ಪ್ರಭುವೂ ಆದ ಯೇಸುಕ್ರಿಸ್ತರ ಅನ್ಯೋನ್ಯತೆಗೆ ನಿಮ್ಮನ್ನು ಕರೆದಿರುವ ದೇವರು ನಿಜಕ್ಕೂ ವಿಶ್ವಾಸಪಾತ್ರರು.</verse>
				<verse number="10">ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ: ವಾದವಿವಾದವಿಲ್ಲದೆ, ಭಿನ್ನಭೇದಗಳಿಲ್ಲದೆ ಒಂದೇ ಮನಸ್ಸಿನಿಂದಲೂ ಒಂದೇ ಉದ್ದೇಶದಿಂದಲೂ ನೀವು ಐಕಮತ್ಯದಿಂದ ಬಾಳಿರಿ.</verse>
				<verse number="11">ಸಹೋದರರೇ, ನೀವು ಜಗಳವಾಡುತ್ತಿದ್ದೀರಿ ಎಂಬುದು ಖ್ಲೊಯೇಯನ ಮನೆಯವರಿಂದ ತಿಳಿದುಬಂದಿದೆ.</verse>
				<verse number="12">ನಿಮ್ಮ ಪೈಕಿ, ತಾನು ಪೌಲನ ಕಡೆಯವನು ಎಂದು ಒಬ್ಬ, ತಾನು ಅಪೊಲೋಸನ ಕಡೆಯವನು ಎಂದು ಇನ್ನೊಬ್ಬ, ತಾನು ಕೇಫನ ಕಡೆಯವನು ಎಂದು ಮತ್ತೊಬ್ಬ, ತಾನು ಕ್ರಿಸ್ತನ ಕಡೆಯವನು ಎಂದು ಮಗದೊಬ್ಬ. ಹೀಗೆ ಒಬ್ಬೊಬ್ಬರು ಒಂದೊಂದು ತೆರನಾಗಿ ಹೇಳಿಕೊಳ್ಳುತ್ತಾರಂತೆ.</verse>
				<verse number="13">ಕ್ರಿಸ್ತಯೇಸು ಭಾಗಭಾಗವಾಗಿ ವಿಂಗಡಿಸಿ ಹೋಗಿದ್ದಾರೆಯೇ? ನಿಮಗೋಸ್ಕರ ಶಿಲುಬೆಯ ಮೇಲೆ ಮಡಿದವನು ಪೌಲನೇ? ನೀವು ದೀಕ್ಷಾಸ್ನಾನ ಪಡೆದದ್ದು ಪೌಲನ ಹೆಸರಿನಲ್ಲೇ?</verse>
				<verse number="14">ಸದ್ಯ! ಕ್ರಿಸ್ಪನು ಮತ್ತು ಗಾಯನು ಇವರಿಬ್ಬರನ್ನು ಬಿಟ್ಟರೆ ನಿಮ್ಮ ಪೈಕಿ ಯಾರಿಗೂ ನಾನು ದೀಕ್ಷಾಸ್ನಾನವನ್ನು ಕೊಟ್ಟಿಲ್ಲ.</verse>
				<verse number="15">ಆದ್ದರಿಂದ ನಿಮ್ಮಲ್ಲಿ ಯಾರೂ ದೀಕ್ಷಾಸ್ನಾನವನ್ನು ನನ್ನ ಹೆಸರಿನಲ್ಲಿ ಪಡೆದಿರಿ ಎಂದು ಹೇಳಿಕೊಳ್ಳುವಂತಿಲ್ಲ.</verse>
				<verse number="16">ಹೌದು, ಸ್ತೇಫನನ ಮನೆಯವರಿಗೂ ದೀಕ್ಷಾಸ್ನಾನವನ್ನು ಕೊಟ್ಟಿದ್ದೇನೆ. ಇವರಲ್ಲದೆ ಇನ್ನಾರಿಗೂ ದೀಕ್ಷಾಸ್ನಾನವನ್ನು ಕೊಟ್ಟ ನೆನಪು ನನಗಿಲ್ಲ.</verse>
				<verse number="17">ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ್‍ಚಾತುರ್ಯದಿಂದಲ್ಲ. ಹಾಗೆ ಸಾರಿದ್ದೇ ಆದರೆ, ಕ್ರಿಸ್ತಯೇಸುವಿನ ಶಿಲುಬೆಯೇ ನಿರರ್ಥಕವಾದೀತು.</verse>
				<verse number="18">ವಿನಾಶಮಾರ್ಗದಲ್ಲಿರುವವರಿಗೆ ಶಿಲುಬೆಯ ಸಂದೇಶ ಹುಚ್ಚು ಸಂಗತಿಯಾಗಿದೆ. ಮುಕ್ತಿಮಾರ್ಗದಲ್ಲಿರುವ ನಮಗಾದರೋ ಅದು ದೈವಶಕ್ತಿಯಾಗಿದೆ.</verse>
				<verse number="19">“ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು ಜಾಣರ ಜಾಣತನಕ್ಕೆ ಭಂಗತರುವೆನು” ಎಂದು ಪವಿತ್ರಗ್ರಂಥದಲ್ಲಿ ಇದೆಯಲ್ಲವೇ?</verse>
				<verse number="20">ಹೀಗಿರುವಾಗ ಜ್ಞಾನಿಯೆಲ್ಲಿ? ಶಾಸ್ತ್ರಜ್ಞನೆಲ್ಲಿ? ಜಗತ್ತಿನ ತರ್ಕನಿಪುಣನೆಲ್ಲಿ? ಪ್ರಪಂಚದ ಜ್ಞಾನವನ್ನು ದೇವರು ಹುಚ್ಚುತನವಾಗಿಸಿಲ್ಲವೇ?</verse>
				<verse number="21">ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು</verse>
				<verse number="22">ಯೆಹೂದ್ಯರು ಸೂಚಕಕಾರ್ಯಗಳನ್ನು ಕೇಳುತ್ತಾರೆ. ಗ್ರೀಕರು ಜ್ಞಾನವನ್ನು ಅರಸುತ್ತಾರೆ.</verse>
				<verse number="23">ನಾವಾದರೋ ಶಿಲುಬೆಗೇರಿಸಲಾದ ಕ್ರಿಸ್ತಯೇಸುವನ್ನು ಪ್ರಚುರಪಡಿಸುತ್ತೇವೆ. ಯೆಹೂದ್ಯರಿಗೆ ಇದು ಅಸಹ್ಯವಾಗಿದೆ; ಅನ್ಯಜನರಿಗೆ ಹಾಸ್ಯಾಸ್ಪದವಾಗಿದೆ.</verse>
				<verse number="24">ಆದರೆ ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ದೇವರಿಂದ ಕರೆಹೊಂದಿದ್ದರೆ ಅಂಥವರಿಗೆ ಯೇಸುಕ್ರಿಸ್ತರು ದೇವರ ಶಕ್ತಿಯಾಗಿದ್ದಾರೆ ಹಾಗೂ ದೇವರ ಜ್ಞಾನವಾಗಿದ್ದಾರೆ.</verse>
				<verse number="25">‘ದೇವರ ಹುಚ್ಚುತನ’ ಎಂಬುದು ಮಾನವ ಜ್ಞಾನಕ್ಕಿಂತಲೂ ಶ್ರೇಷ್ಠವಾದುದು. ‘ದೇವರ ದೌರ್ಬಲ್ಯ’ ಎಂಬುದು ಮಾನವ ಶಕ್ತಿಗಿಂತಲೂ ಪ್ರಬಲವಾದುದು.</verse>
				<verse number="26">ಸಹೋದರರೇ, ನಿಮ್ಮನ್ನು ದೇವರು ಕರೆದಾಗ ನೀವು ಹೇಗಿದ್ದಿರಿ ಎಂದು ಜ್ಞಾಪಿಸಿಕೊಳ್ಳಿ. ಲೋಕದ ಎಣಿಕೆಯಲ್ಲಿ ನಿಮ್ಮೊಳಗೆ ಜ್ಞಾನಿಗಳು ಅನೇಕರಿಲ್ಲ. ಪರಾಕ್ರಮಿಗಳು ಅನೇಕರಿಲ್ಲ, ಕುಲೀನರು ಅನೇಕರಿಲ್ಲ.</verse>
				<verse number="27">ಜ್ಞಾನಿಗಳನ್ನು ನಾಚಿಕೆಗೀಡುಮಾಡಲು ದೇವರು ಲೋಕದ ದೃಷ್ಟಿಯಲ್ಲಿ ಮೂರ್ಖರನ್ನು ಆರಿಸಿಕೊಂಡರು; ಅಂತೆಯೇ ಬಲಿಷ್ಠರನ್ನು ಲಜ್ಜೆಗೀಡುಮಾಡಲು ಲೋಕದ ದೃಷ್ಟಿಯಲ್ಲಿ ಬಲಹೀನರನ್ನು ಆರಿಸಿಕೊಂಡರು.</verse>
				<verse number="28">ಲೋಕದ ದೃಷ್ಟಿಯಲ್ಲಿ ಗಣ್ಯವಾದುದನ್ನು ನಿರ್ನಾಮಗೊಳಿಸಲು ಗಣನೆಗೆ ಬಾರದುದನ್ನು, ಕೀಳಾದುದನ್ನು, ಬೀಳಾದುದನ್ನು ಆರಿಸಿಕೊಂಡರು.</verse>
				<verse number="29">ಯಾವ ಮಾನವನೂ ತಮ್ಮ ಸಮ್ಮುಖದಲ್ಲಿ ಅಹಂಕಾರಪಡದಂತೆ ದೇವರು ಹೀಗೆ ಮಾಡಿದರು.</verse>
				<verse number="30">ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.</verse>
				<verse number="31">ಆದ್ದರಿಂದ ಪವಿತ್ರಗ್ರಂಥದಲ್ಲಿ ಹೇಳಿರುವಂತೆ: ‘ಹೆಚ್ಚಳಪಡುವವನು ಪ್ರಭುವಿನಲ್ಲಿ ಹೆಚ್ಚಳಪಡಲಿ.’</verse>
			</chapter>
			<chapter number="2">
				<verse number="1">ಸಹೋದರರೇ, ದೇವರ ಸತ್ಯಾರ್ಥವನ್ನು ಸಾರಲು ನಿಮ್ಮಲ್ಲಿಗೆ ನಾನು ಬಂದಾಗ ವಾಕ್ಚಾತುರ್ಯವನ್ನಾಗಲಿ, ಜ್ಞಾನಾಡಂಬರವನ್ನಾಗಲಿ ಪ್ರದರ್ಶಿಸುತ್ತಾ ಬರಲಿಲ್ಲ.</verse>
				<verse number="2">ನಾನು ನಿಮ್ಮೊಡನೆ ಇದ್ದಾಗ, ಯೇಸುಕ್ರಿಸ್ತರನ್ನು, ಅದೂ ಶಿಲುಬೆಗೇರಿಸಲಾದ ಯೇಸುವನ್ನು ಹೊರತು ಬೇರೆ ಯಾವುದನ್ನೂ ಅರಿಯಲು ಆಶಿಸಲಿಲ್ಲ.</verse>
				<verse number="3">ಈ ಕಾರಣ, ನಾನು ನಿಮ್ಮ ನಡುವೆ ದುರ್ಬಲನೂ ಭಯಭೀತನೂ ಆಗಿದ್ದೆ.</verse>
				<verse number="4">ನನ್ನ ಬೋಧನೆ ಹಾಗು ಮಾತುಕತೆ ಕೇವಲ ಬುದ್ಧಿವಂತಿಕೆಯಿಂದಾಗಲಿ, ಮಾತಿನ ಚಮತ್ಕಾರದಿಂದಾಗಲಿ ಕೂಡಿರಲಿಲ್ಲ; ಅದಕ್ಕೆ ಬದಲಾಗಿ ದೇವರ ಆತ್ಮವನ್ನು ಅವರ ಶಕ್ತಿಯನ್ನು ಸಮರ್ಥಿಸುತ್ತಿದ್ದವು.</verse>
				<verse number="5">ಅಂತೆಯೇ, ನಿಮ್ಮ ವಿಶ್ವಾಸವು ಮನುಷ್ಯ ಜ್ಞಾನವನ್ನು ಆಧರಿಸದೆ, ದೇವರ ಶಕ್ತಿಯನ್ನು ಆಧರಿಸಬೇಕೆಂಬುದೇ ನನ್ನ ಉದ್ದೇಶವಾಗಿತ್ತು.</verse>
				<verse number="6">ನಾನು ಪರಿಣಿತರೊಂದಿಗೆ ಜ್ಞಾನವನ್ನೇ ಕುರಿತು ಮಾತನಾಡುತ್ತೇನೆ. ಆದರೆ ಇದು ಇಹಲೋಕದ ಜ್ಞಾನವಲ್ಲ, ಅಳಿದುಹೋಗುವಂಥ ಅಧಿಪತಿಗಳ ಜ್ಞಾನವೂ ಅಲ್ಲ.</verse>
				<verse number="7">ನಾನು ಸಾರುವ ಜ್ಞಾನ ದೇವರ ನಿಗೂಢ ಜ್ಞಾನ. ಮಾನವರಿಗೆ ಮುಚ್ಚಿಟ್ಟ ಜ್ಞಾನ. ನಮ್ಮನ್ನು ಮಹಿಮೆಗೊಳಿಸುವುದಕ್ಕಾಗಿ ಲೋಕದ ಉತ್ಪತ್ತಿಗೆ ಮೊದಲೇ ದೇವರು ನಿಯೋಜಿಸಿದ ಜ್ಞಾನ.</verse>
				<verse number="8">ಲೋಕಾಧಿಪತಿಗಳಾರಿಗೂ ಇದರ ಅರಿವಿರಲಿಲ್ಲ. ಹಾಗೆ ಅರಿತಿದ್ದರೆ ಆ ಮಹಿಮಾನ್ವಿತ ಪ್ರಭುವನ್ನು ಅವರು ಶಿಲುಬೆಗೇರಿಸುತ್ತಿರಲಿಲ್ಲ.</verse>
				<verse number="9">ಪವಿತ್ರಗ್ರಂಥದಲ್ಲಿ ಹೇಳಿರುವಂತೆ: “ಕಣ್ಣಾವುದೂ ಕಂಡಿಲ್ಲ, ಕಿವಿಯಾವುದೂ ಕೇಳಿಲ್ಲ. ಮನುಜಕಲ್ಪನೆಗೂ ಎಟುಕಲಿಲ್ಲ. ಅಂಥ ಅತಿಶಯಗಳನ್ನು ಸಜ್ಜುಗೊಳಿಸಿರುವನು, ತನ್ನನೊಲಿದವರಿಗೆ ಪರಮದೇವನು.”</verse>
				<verse number="10">ನಮಗಾದರೋ ದೇವರು ಪವಿತ್ರಾತ್ಮ ಅವರ ಮುಖಾಂತರ ಇವುಗಳನ್ನು ಪ್ರಕಟಿಸಿದ್ದಾರೆ. ಸಕಲವನ್ನು ಹಾಗೂ ದೇವರ ಅಂತರಾಳವನ್ನು ಅವಲೋಕಿಸುವವರು ಈ ಪವಿತ್ರಾತ್ಮರೇ.</verse>
				<verse number="11">ಮಾನವನ ಆಲೋಚನೆಗಳನ್ನು ಅವನ ಅಂತರಾತ್ಮವಲ್ಲದೆ ಮತ್ತಾರು ಬಲ್ಲರು? ಅಂತೆಯೇ, ದೇವರ ಆಲೋಚನೆಗಳನ್ನು ಪವಿತ್ರಾತ್ಮರಲ್ಲದೆ ಬೇರೆ ಯಾರೂ ಅರಿಯಲಾರರು.</verse>
				<verse number="12">ನಾವಾದರೋ ಪ್ರಾಪಂಚಿಕ ಆತ್ಮವನ್ನು ಹೊಂದಿದವರಲ್ಲ. ದೇವರು ನಮಗೆ ದಯಪಾಲಿಸಿರುವ ವರಪ್ರಸಾದಗಳನ್ನು ಅರಿತುಕೊಳ್ಳುವಂತೆ ಮಾಡುವ ಪಾರಮಾರ್ಥಿಕ ಆತ್ಮವನ್ನು ಪಡೆದಿದ್ದೇವೆ.</verse>
				<verse number="13">ನಾವು ಇವುಗಳನ್ನು ಮಾನವ ಜ್ಞಾನ ಪ್ರೇರೇಪಿಸಿದ ಮಾತುಗಳಿಂದ ಹೇಳುವುದಿಲ್ಲ. ದೇವರ ಆತ್ಮದಿಂದ ಪ್ರೇರಿತವಾದ ಮಾತುಗಳಿಂದ ಹೇಳುತ್ತೇವೆ. ಹೀಗೆ ಆಧ್ಯಾತ್ಮಿಕ ಸತ್ಯಗಳನ್ನು, ಆಧ್ಯಾತ್ಮಿಕ ವ್ಯಕ್ತಿಗಳಿಗೆ ವಿವರಿಸುತ್ತೇವೆ.</verse>
				<verse number="14">ಭೌತಿಕ ಮನುಷ್ಯನು ದೇವರ ಆತ್ಮದ ವರಗಳನ್ನು ನಿರಾಕರಿಸುತ್ತಾನೆ. ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ. ಅವುಗಳನ್ನು ಗ್ರಹಿಸಲು ಅವನಿಂದಾಗದು. ಏಕೆಂದರೆ, ಆಧ್ಯಾತ್ಮಿಕ ವಿವೇಚನೆಯಿಂದ ಮಾತ್ರ ಅವುಗಳನ್ನು ಅರಿಯಲು ಸಾಧ್ಯ.</verse>
				<verse number="15">ದೇವರ ಆತ್ಮವನ್ನು ಹೊಂದಿದವನು ಎಲ್ಲವನ್ನೂ ವಿಚಾರಣೆಮಾಡಿ ತಿಳಿದುಕೊಳ್ಳುತ್ತಾನೆ. ಅವನನ್ನು ಯಾರೂ ವಿಚಾರಣೆಗೆ ಗುರಿಮಾಡಲಾಗದು.</verse>
				<verse number="16">“ಪ್ರಭುವಿನ ಮನಸ್ಸನ್ನರಿತವರಾರು? ಪ್ರಭುವಿಗೆ ಉಪದೇಶಿಸುವವರಾರು?” ಎಂದು ಲಿಖಿತವಾಗಿದೆ. ನಾವಾದರೋ, ಕ್ರಿಸ್ತಯೇಸುವಿನ ಮನೋಭಾವನೆಯುಳ್ಳವರು.</verse>
			</chapter>
			<chapter number="3">
				<verse number="1">ಪ್ರಿಯ ಸಹೋದರರೇ, ದೇವರ ಆತ್ಮವನ್ನು ಪಡೆದವರೊಡನೆ ಮಾತನಾಡಿದಂತೆ ನಿಮ್ಮೊಡನೆ ನಾವು ಮಾತನಾಡಲಿಲ್ಲ. ಲೌಕಿಕರು ನೀವು; ಕ್ರಿಸ್ತಯೇಸುವಿನಲ್ಲಿ ಹಸುಗೂಸುಗಳು ನೀವು ಎಂದು ಭಾವಿಸಿ ನಿಮ್ಮೊಡನೆ ಮಾತನಾಡಬೇಕಾಯಿತು.</verse>
				<verse number="2">ನಾನು ನಿಮಗೆ ಹಾಲೂಡಿಸಿದೆನು; ಗಟ್ಟಿ ಆಹಾರವನ್ನು ಕೊಡಲಿಲ್ಲ. ಏಕೆಂದರೆ, ಅದನ್ನು ಜೀರ್ಣಿಸಿಕೊಳ್ಳಲು ನಿಮಗೆ ಶಕ್ತಿ ಇರಲಿಲ್ಲ. ಇಂದಿಗೂ ನೀವು ಶಕ್ತರಲ್ಲ.</verse>
				<verse number="3">ನೀವು ಇನ್ನೂ ಲೌಕಿಕರಂತೆ ಬಾಳುತ್ತಿದ್ದೀರಿ. ನಿಮ್ಮ ನಡುವೆ ದ್ವೇಷ-ಅಸೂಯೆ, ವಾದ-ವಿವಾದಗಳು ಪ್ರಬಲವಾಗಿದ್ದು ನೀವಿನ್ನೂ ಪ್ರಾಣಿಗಳಂತೆ, ಸಾಧಾರಣ ಮನುಷ್ಯರಂತೆ ವರ್ತಿಸುತ್ತಿದ್ದೀರಲ್ಲವೆ?</verse>
				<verse number="4">ಒಬ್ಬನು, ನಾನು ಪೌಲನ ಕಡೆಯವನು; ಇನ್ನೊಬ್ಬನು, ನಾನು ಅಪೊಲೋಸನ ಕಡೆಯವನು, ಎಂದು ನಿಮ್ಮೊಳಗೆ ಕಿತ್ತಾಡುವ ನೀವು ಕೇವಲ ನರಪ್ರಾಣಿಗಳಲ್ಲದೆ ಮತ್ತೇನು?</verse>
				<verse number="5">ಅಪೊಲೋಸನು ಯಾರು? ಪೌಲನು ಯಾರು? ನಿಮ್ಮನ್ನು ವಿಶ್ವಾಸಕ್ಕೆ ಕರೆತಂದ ದಾಸರು ನಾವಲ್ಲವೇ? ನಮ್ಮಲ್ಲಿ ಪ್ರತಿಯೊಬ್ಬನು ಪ್ರಭು ನಿಯಮಿಸುವ ಕಾರ್ಯವನ್ನು ನಿರ್ವಹಿಸುತ್ತೇವೆ.</verse>
				<verse number="6">ನಾನು ಸಸಿಯನ್ನು ನೆಟ್ಟೆನು; ಅಪೊಲೋಸನು ನೀರೆರೆದನು; ಆದರೆ ಅದನ್ನು ಬೆಳೆಸಿದವರು ದೇವರು.</verse>
				<verse number="7">ಆದ್ದರಿಂದ ನೆಡುವವನಾಗಲಿ, ನೀರೆರೆಯುವವನಾಗಲಿ ಪ್ರಮುಖನಲ್ಲ; ಬೆಳವಣಿಗೆ ನೀಡುವ ದೇವರೇ ದೊಡ್ಡವರು.</verse>
				<verse number="8">ನೆಡುವವನೂ ನೀರೆರೆಯುವವನೂ ಇಬ್ಬರೂ ಅಗತ್ಯವಾಗಿ ಬೇಕಾದವರೇ. ಅವನವನ ದುಡಿಮೆಗೆ ತಕ್ಕ ಹಾಗೆ ಪ್ರತಿಯೊಬ್ಬನೂ ಸಂಭಾವನೆ ಪಡೆಯುತ್ತಾನೆ.</verse>
				<verse number="9">ನಾವು ದೇವರ ಸಹಕಾರ್ಮಿಕರು. ನೀವು ದೇವರೆ ಸಾಗುವಳಿಮಾಡುವ ಹೊಲ; ಅವರೆ ನಿರ್ಮಿಸುತ್ತಿರುವ ಮಂದಿರ.</verse>
				<verse number="10">ದೇವರು ನನಗಿತ್ತ ವರದಾನಗಳಿಗೆ ಅನುಸಾರವಾಗಿ ನಾನು ಚತುರಶಿಲ್ಪಿಯಂತೆ ಅಸ್ತಿವಾರ ಹಾಕಿದೆ. ಇನ್ನೊಬ್ಬನು ಅದರ ಮೇಲೆ ಕಟ್ಟುತ್ತಿದ್ದಾನೆ. ಆದರೆ ಕಟ್ಟುವ ಪ್ರತಿಯೊಬ್ಬನು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಲಿ.</verse>
				<verse number="11">ಈಗಾಗಲೇ ಅಸ್ತಿವಾರ ಹಾಕಲಾಗಿದೆ. ಯೇಸುಕ್ರಿಸ್ತರೇ ಆ ಅಸ್ತಿವಾರ. ಇದಲ್ಲದೆ, ಬೇರೆ ಅಸ್ತಿವಾರವನ್ನು ಯಾರೂ ಹಾಕಲಾಗದು.</verse>
				<verse number="12">ಈ ಅಸ್ತಿವಾರದ ಮೇಲೆ ಕೆಲವರು ಚಿನ್ನ, ಬೆಳ್ಳಿ, ರತ್ನ - ಇವುಗಳನ್ನು ಉಪಯೋಗಿಸ ಕಟ್ಟುತ್ತಾರೆ. ಮತ್ತೆ ಕೆಲವರು ಹುಲ್ಲು, ಕಟ್ಟಿಗೆ, ಜೊಂಡು - ಇವುಗಳನ್ನು ಬಳಸುತ್ತಾರೆ.</verse>
				<verse number="13">ಅವನವನ ಕೆಲಸದ ಗುಣವು ಕಡೆಯ ದಿನ ಬಟ್ಟಬಯಲಾಗುವುದು. ಯೇಸುಕ್ರಿಸ್ತರ ಆ ದಿನವು ಬೆಂಕಿಯ ದಿನವಾಗಿ ಪ್ರಜ್ವಲಿಸುವುದು. ಪ್ರತಿಯೊಬ್ಬನ ಕೆಲಸವನ್ನು ಆ ಬೆಂಕಿ ಪರೀಕ್ಷಿಸುವುದು.</verse>
				<verse number="14">ಕಟ್ಟಡವು ಸುಟ್ಟುಹೋಗದೆ ಅಸ್ತಿವಾರದ ಮೇಲೆ ನೆಲೆಯಾಗಿ ನಿಂತರೆ ಕಟ್ಟಿದವನಿಗೆ ಸಂಭಾವನೆ ದೊರಕುತ್ತದೆ.</verse>
				<verse number="15">ಸುಟ್ಟುಹೋದರೆ ಅವನಿಗೇ ನಷ್ಟವಾಗುತ್ತದೆ. ಅವನಾದರೋ ಬೆಂಕಿಯಿಂದ ತಪ್ಪಿಸಿಕೊಂಡವನ ಹಾಗೆ ರಕ್ಷಣೆಯನ್ನು ಹೊಂದುತ್ತಾನೆ.</verse>
				<verse number="16">ನೀವು ದೇವರ ಆಲಯವಾಗಿದ್ದೀರಿ. ದೇವರ ಆತ್ಮವು ನಿಮ್ಮಲ್ಲಿ ವಾಸಿಸುತ್ತದೆಂದು ನಿಮಗೆ ಚೆನ್ನಾಗಿ ತಿಳಿದಿದೆ.</verse>
				<verse number="17">ಯಾವನಾದರೂ ದೇವಾಲಯವನ್ನು ನಾಶಮಾಡಿದರೆ ದೇವರು ಅವನನ್ನು ನಾಶಮಾಡುತ್ತಾರೆ. ದೇವರ ಆಲಯವು ಪವಿತ್ರವಾದುದು. ನೀವೇ ಆ ಆಲಯ.</verse>
				<verse number="18">ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ.</verse>
				<verse number="19">ಇಹಲೋಕಪ ಜಾಣತನವು ದೇವರ ದೃಷ್ಟಿಯಲ್ಲಿ ಹುಚ್ಚುತನವೇ ಸರಿ. “ದೇವರು ಜ್ಞಾನಿಗಳನ್ನು ಅವರ ಜಾಲದಲ್ಲಿಯೇ ಸಿಕ್ಕಿಸುವರು” ಎಂದೂ</verse>
				<verse number="20">“ಜ್ಞಾನಿಗಳ ಯೋಜನೆಗಳು ನಿಷ್ಫಲವೆಂಬುದು ಪ್ರಭುವಿಗೆ ತಿಳಿದಿದೆ” ಎಂದೂ ಲಿಖಿತವಾಗಿದೆಯಲ್ಲವೆ?</verse>
				<verse number="21">ಆದ್ದರಿಂದ ಕೇವಲ ನರಮಾನವರನ್ನೇ ನೆಚ್ಚಿಕೊಂಡು ಯಾರೂ ಹೆಚ್ಚಳಪಡದಿರಲಿ.</verse>
				<verse number="22">ವಾಸ್ತವವಾಗಿ ಸಮಸ್ತವೂ ನಿಮ್ಮದೇ. ಪೌಲ, ಅಪೊಲೋಸ್, ಕೇಫ - ಇವರಾಗಲಿ; ಜಗತ್ತು, ಜೀವ, ಮರಣ - ಇವುಗಳಾಗಲಿ, ಅಥವಾ ವರ್ತಮಾನ, ಭವಿಷ್ಯತ್ಕಾಲಗಳಾಗಲಿ, ಇವೆಲ್ಲವೂ ನಿಮ್ಮವೇ.</verse>
				<verse number="23">ಆದರೆ ನೀವು ಕ್ರಿಸ್ತಯೇಸುವಿಗೆ ಸೇರಿದವರು; ಕ್ರಿಸ್ತಯೇಸು ದೇವರಿಗೆ ಸೇರಿದವರು.</verse>
			</chapter>
			<chapter number="4">
				<verse number="1">ನಾವು ಕ್ರಿಸ್ತಯೇಸುವಿನ ದಾಸರೆಂದೂ ದೇವರ ಸತ್ಯಾರ್ಥಗಳ ನಂಬಿಗಸ್ಥ ನಿರ್ವಾಹಕರೆಂದೂ ಜನರು ನಮ್ಮನ್ನು ಪರಿಗಣಿಸಲಿ.</verse>
				<verse number="2">ನಿರ್ವಾಹಕರು ಪ್ರಾಮಾಣಿಕರಾಗಿರಬೇಕಾದುದು ಅತ್ಯವಶ್ಯ.</verse>
				<verse number="3">ನನ್ನ ವಿಷಯದಲ್ಲಿ ಹೇಳುವುದಾದರೆ, ನಿಮ್ಮಿಂದಾಗಲಿ, ಮಾನವ ನಿಯಮಿತ ನ್ಯಾಯಾಲಯದಿಂದಾಗಲಿ ನನ್ನ ವಿಚಾರಣೆಯಾಗುವುದರ ಬಗ್ಗೆ ನನಗೆ ಕಿಂಚಿತ್ತೂ ಚಿಂತೆಯಿಲ್ಲ. ನನಗೆ ನಾನೇ ನ್ಯಾಯತೀರ್ಪು ಮಾಡಿಕೊಳ್ಳುವುದೂ ಇಲ್ಲ.</verse>
				<verse number="4">ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಾಕ್ಷಿಗೆ ತೋರುವುದಿಲ್ಲ. ಆದರೂ ನಾನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯನಿರ್ಣಯ ಮಾಡುವವರು ಪ್ರಭುವೇ.</verse>
				<verse number="5">ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.</verse>
				<verse number="6">ಸಹೋದರರೇ, ನಿಮ್ಮ ಪ್ರಯೋಜನಕ್ಕಾಗಿ ಇದೆಲ್ಲವನ್ನು ನನಗೂ ಅಪೊಲೋಸನಿಗೂ ಅನ್ವಯಿಸಿ ಹೇಳಿದ್ದೇನೆ. ನೀವು ನಮ್ಮ ಆದರ್ಶವನ್ನು ಅನುಸರಿಸಬೇಕು. ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಬಾರದು. ನಿಮ್ಮಲ್ಲಿ ಯಾರೂ ಒಬ್ಬನ ಪಕ್ಷವಹಿಸಿ ಜಂಬ ಕೊಚ್ಚಿಕೊಂಡು ಮತ್ತೊಬ್ಬನನ್ನು ಕಡೆಗಣಿಸಬಾರದು.</verse>
				<verse number="7">ಇತರರಿಗಿಂತಲೂ ನಿನ್ನನ್ನು ಶ್ರೇಷ್ಠನನ್ನಾಗಿಸಿದವರು ಯಾರು? ದೇವರಿಂದ ಪಡೆಯದೆ ಇರುವುದು ನಿನ್ನಲ್ಲಿ ಯಾವುದಾದರೂ ಇದೆಯೆ? ಹೀಗೆ ಎಲ್ಲವನ್ನೂ ದೇವರಿಂದ ಪಡೆದ ಮೇಲೆ, ಪಡೆಯದವನಂತೆ ಜಂಬ ಕೊಚ್ಚಿಕೊಳ್ಳುವುದೇಕೆ?</verse>
				<verse number="8">ಈಗಾಗಲೇ ನೀವು ಸಂತೃಪ್ತರಾಗಿಬಿಟ್ಟಿರೋ? ಇಷ್ಟಕ್ಕೇ ಶ್ರೀಮಂತರಾಗಿಬಿಟ್ಟಿರೋ? ನಮ್ಮನ್ನು ಬಿಟ್ಟು ನೀವು ಸಿಂಹಾಸನವೇರಿಬಿಟ್ಟಿರೋ? ನೀವು ನಿಜವಾಗಿಯೂ ರಾಜರಾಗಿದ್ದರೆ ಚೆನ್ನಾಗಿರುತ್ತಿತ್ತು! ಆಗ ನಾವೂ ನಿಮ್ಮ ಜೊತೆ ರಾಜ್ಯ ಆಳಬಹುದಿತ್ತು!</verse>
				<verse number="9">ಬದಲಿಗೆ, ಪ್ರೇಷಿತರಾದ ನಮ್ಮನ್ನು ದೇವರು ಕಟ್ಟಕಡೆಯವರನ್ನಾಗಿಸಿದ್ದಾರೆಂದು ತೋರುತ್ತದೆ. ಎಲ್ಲರ ಮುಂದೆ ಮರಣದಂಡನೆಗೆ ಎಳೆದೊಯ್ಯಲಾಗುವವರಂತೆ ನಾವು ದೂತರಿಗೂ ಮಾನವರಿಗೂ ಇಡೀ ಜಗತ್ತಿಗೂ ಹಾಸ್ಯಾಸ್ಪದವಾದ ನೋಟವಾಗಿದ್ದೇವೆ.</verse>
				<verse number="10">ಕ್ರಿಸ್ತಯೇಸುವಿನ ನಿಮಿತ್ತ ನಾವಂತೂ ಹುಚ್ಚರು, ನೀವಾದರೋ ಕ್ರಿಸ್ತಯೇಸುವಿನಲ್ಲಿ ಬುದ್ಧಿವಂತರು; ನಾವು ಬಲಹೀನರು, ನೀವು ಬಲಾಢ್ಯರು; ನಾವು ಅವಮಾನಿತರು, ನೀವು ಸನ್ಮಾನಿತರು!</verse>
				<verse number="11">ಈ ಗಳಿಗೆಯವರೆಗೂ ನಾವು ಹಸಿದು ಬಾಯಾರಿದವರು, ಬಟ್ಟೆಬರೆ ಇಲ್ಲದವರು, ಏಟುಪೆಟ್ಟು ತಿನ್ನುವವರು ಮತ್ತು ಮನೆಮಠವಿಲ್ಲದೆ ಅಲೆಯುವವರು ಆಗಿದ್ದೇವೆ.</verse>
				<verse number="12">ಸ್ವಂತ ದುಡಿಮೆಯಿಂದ ಜೀವಿಸುತ್ತೇವೆ; ನಮ್ಮನ್ನು ಶಪಿಸುವವರನ್ನು ಆಶೀರ್ವದಿಸುತ್ತೇವೆ; ಹಿಂಸೆಗೊಳಗಾದಾಗ ಸಹಿಸಿಕೊಳ್ಳುತ್ತೇವೆ.</verse>
				<verse number="13">ಅಪವಾದ ಹೊರಿಸಿದವರೊಡನೆ ವಿನಯದಿಂದ ವರ್ತಿಸುತ್ತೇವೆ; ಪ್ರಪಂಚದ ಪಾಲಿಗೆ ನಾವೀಗ ಕಸಕ್ಕಿಂತಲೂ ಕಡೆ; ವಿಶ್ವಕ್ಕೇ ಹೊಲಸು!</verse>
				<verse number="14">ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಬರೆಯಲಿಲ್ಲ. ನಮ್ಮ ನೆಚ್ಚಿನ ಮಕ್ಕಳಾದ ನಿಮ್ಮನ್ನು ಎಚ್ಚರಿಸಲೆಂದು ಬರೆದೆನು.</verse>
				<verse number="15">ನಿಮಗೆ ಕ್ರಿಸ್ತಯೇಸುವಿನಲ್ಲಿ ಸಾವಿರಾರು ಮಂದಿ ಶಿಕ್ಷಕರು ಇರಬಹುದು. ಆದರೆ ನಿಮಗೆ ನಾನೊಬ್ಬನೇ ತಂದೆ. ಶುಭಸಂದೇಶದ ಮೂಲಕ ನಾನೇ ನಿಮ್ಮನ್ನು ಕ್ರಿಸ್ತಯೇಸುವಿನಲ್ಲಿ ಪಡೆದ ತಂದೆ.</verse>
				<verse number="16">ಆದ್ದರಿಂದ ನನ್ನನ್ನು ಅನುಸರಿಸಿ ಬಾಳಬೇಕೆಂದು ನಿಮ್ಮನ್ನು ಒತ್ತಾಯಿಸುತ್ತೇನೆ.</verse>
				<verse number="17">ಇದಕ್ಕಾಗಿಯೇ ಪ್ರಭುವಿನಲ್ಲಿ ನನ್ನ ನೆಚ್ಚಿನ ಹಾಗೂ ಪ್ರಾಮಾಣಿಕ ಮಗನಾದ ತಿಮೊಥೇಯನನ್ನು ನಿಮ್ಮ ಬಳಿಗೆ ಕಳಿಸಿದ್ದೇನೆ. ಆತನು ಕ್ರಿಸ್ತಯೇಸುವಿನಲ್ಲಿ ನನ್ನ ಬಾಳುವೆಯನ್ನು ಕುರಿತು ತಿಳಿಸುವನು; ನಾನು ಎಲ್ಲೆಡೆಯಲ್ಲೂ ಎಲ್ಲಾ ಧರ್ಮಸಭೆಗಳಲ್ಲೂ ಬೋಧಿಸುತ್ತಿರುವುದನ್ನು ನಿಮ್ಮ ನೆನಪಿಗೆ ತರುವನು.</verse>
				<verse number="18">ಇನ್ನು ನಾನು ನಿಮ್ಮ ಬಳಿಗೆ ಬರುವುದಿಲ್ಲ ಎಂದು ಭಾವಿಸಿ ಕೆಲವರು ಅಹಂಕಾರಿಗಳಾಗಿ ಮೆರೆಯುತ್ತಿದ್ದಾರೆಂದು ತಿಳಿದುಬಂದಿದೆ.</verse>
				<verse number="19">ಪ್ರಭುವಿನ ಚಿತ್ತವಾದರೆ ನಾನು ಬೇಗನೆ ಬರುತ್ತೇನೆ. ಬಂದು, ಆ ಅಹಂಕಾರಿಗಳು ಕೇವಲ ಮಾತಿನ ಮಲ್ಲರೋ ಅಥವಾ ಶಕ್ತಿವಂತರೋ ಎಂದು ಕಂಡುಹಿಡಿಯುತ್ತೇನೆ.</verse>
				<verse number="20">ದೇವರ ಸಾಮ್ರಾಜ್ಯ ಮರುಳು ಮಾತಲ್ಲ, ಶಕ್ತಿಯ ಸಾಧನ,</verse>
				<verse number="21">ಬೆತ್ತವನ್ನು ಹಿಡಿದು ಬಿಗಿಯಲು ಬರಲೋ? ಅಥವಾ ಪ್ರೀತಿ ಸಹಾನುಭೂತಿಯಿಂದ ತುಂಬಿದವನಾಗಿ ಬರಲೋ? ನಿಮಗೆ ಯಾವುದು ಇಷ್ಟ?</verse>
			</chapter>
			<chapter number="5">
				<verse number="1">ಅನ್ಯಜನರಲ್ಲಿ ಕೂಡ ಇಲ್ಲದಂಥ ದುರ್ನಡತೆ ನಿಮ್ಮಲ್ಲಿದೆಯೆಂಬುದಾಗಿ ವರದಿ ಬಂದಿದೆ. ನಿಮ್ಮಲ್ಲಿ ಒಬ್ಬನು ತನ್ನ ತಂದೆಯ ಪತ್ನಿಯನ್ನೇ ಇಟ್ಟುಕೊಂಡಿದ್ದಾನಂತೆ.</verse>
				<verse number="2">ಹೀಗಿರಲು, ನೀವು ಸೊಕ್ಕಿನಿಂದ ಮೆರೆಯಲು ಕಾರಣವಾದರೂ ಎಲ್ಲಿದೆ? ಬದಲಿಗೆ, ನೀವು ವ್ಯಸನಪಟ್ಟು ಅವನನ್ನು ನಿಮ್ಮ ಸಭಾಕೂಟದಿಂದ ಬಹಿಷ್ಕರಿಸಬೇಕಾಗಿತ್ತಲ್ಲವೆ?</verse>
				<verse number="3">ನಾನು ಶಾರೀರಿಕವಾಗಿ ನಿಮ್ಮಿಂದ ದೂರವಿದ್ದರೂ ಆತ್ಮಿಕವಾಗಿ ನಿಮ್ಮ ಹತ್ತಿರವಿದ್ದೇನೆ. ನಿಮ್ಮ ಸಂಗಡವೇ ಇರುವವನಂತೆ ಅವನಿಗೆ ಏನುಮಾಡಬೇಕೆಂದು ಈಗಾಗಲೇ ತೀರ್ಮಾನಿಸಿದ್ದೇನೆ.</verse>
				<verse number="4">ಅದೇನೆಂದರೆ: ನೀವು ಸಭೆಸೇರಿ, ಪ್ರಭು ಯೇಸುವಿನ ಶಕ್ತಿಯ ಆಧಾರದ ಮೇಲೆ ಅವನನ್ನು ಸೈತಾನನಿಗೆ ಒಪ್ಪಿಸಿಬಿಡಬೇಕು. ನಾನು ಆತ್ಮಿಕವಾಗಿ ನಿಮ್ಮ ಮಧ್ಯೆಯಿರುತ್ತೇನೆ.</verse>
				<verse number="5">ಅವನ ದೇಹವು ದಂಡನೆಗೊಳಗಾದರೂ ಅವನ ಆತ್ಮ ಪ್ರಭು ಯೇಸುವಿನ ದಿನದಂದು ಉದ್ಧಾರವಾಗುವಂತೆ ಹೀಗೆ ಮಾಡಬೇಕು.</verse>
				<verse number="6">ನೀವು ಜಂಬ ಕೊಚ್ಚಿಕೊಳ್ಳುವುದು ತರವಲ್ಲ. ಒಂದಿಷ್ಟು ಹುಳಿ, ಹಿಟ್ಟನ್ನೆಲ್ಲಾ ಹುದುಗೆಬ್ಬಿಸುತ್ತದೆಂಬುದನ್ನು ನೀವು ಚೆನ್ನಾಗಿ ಬಲ್ಲಿರಿ.</verse>
				<verse number="7">ನೀವು ಹುಳಿಯಿಲ್ಲದ ಕಣಕವಾಗಿದ್ದೀರಿ. ಅಪ್ಪಟ ರೊಟ್ಟಿಯಾಗುವಂತೆ ಹುಳಿಯನ್ನು ತೆಗೆದುಹಾಕಿರಿ. ಏಕೆಂದರೆ, ಪಾಸ್ಕ ಯಜ್ಞದ ಕುರಿಮರಿಯಾದ ಕ್ರಿಸ್ತಯೇಸು ಬಲಿಯಾಗಿದ್ದಾರೆ.</verse>
				<verse number="8">ಆದಕಾರಣ ನಾವು ದುಷ್ಟತನ, ಕೆಡುಕುತನವೆಂಬ ಹುಳಿಹಿಟ್ಟನ್ನು ವರ್ಜಿಸೋಣ. ಪರಿಶುದ್ಧತೆ ಮತ್ತು ಸತ್ಯತೆ ಎಂಬ ಹುಳಿಯಿಲ್ಲದ ಹೊಸರೊಟ್ಟಿಯನ್ನು ತಿಂದು ಪಾಸ್ಕಹಬ್ಬವನ್ನು ಆಚರಿಸೋಣ.</verse>
				<verse number="9">ದುರಾಚಾರಿಗಳ ಸಹವಾಸ ನಿಮಗೆ ಸಲ್ಲದು, ಎಂದು ನಾನು ಬರೆದಿದ್ದೆ.</verse>
				<verse number="10">ಅಂದರೆ, ಈ ಲೋಕದಲ್ಲಿರುವ ದುರಾಚಾರಿಗಳು, ಲೋಭಿಗಳು, ಸುಲಿಗೆಗಾರರು, ವಿಗ್ರಹಾರಾಧಕರು - ಇಂಥವರ ಸಹವಾಸವನ್ನು ಬಿಟ್ಟುಬಿಡಬೇಕೆಂಬುದು ನನ್ನ ಮಾತಿನ ಅರ್ಥವಲ್ಲ. ಹಾಗೆ ಮಾಡಿದರೆ ನೀವು ಈ ಲೋಕವನ್ನೇ ಬಿಟ್ಟುಹೋಗಬೇಕಾದೀತು.</verse>
				<verse number="11">ಆದರೆ ತಾನು ಕ್ರೈಸ್ತ ಸಹೋದರ ಎನಿಸಿಕೊಂಡು, ದುರಾಚಾರಿಯಾಗಿಯೋ ಲೋಭೀಯಾಗಿಯೋ ವಿಗ್ರಹಾರಾಧಕನಾಗಿಯೋ ಪರನಿಂದಕನಾಗಿಯೋ ಕುಡುಕನಾಗಿಯೋ ಸುಲಿಗೆಗಾರನಾಗಿಯೋ ಯಾರಾದರೂ ಇದ್ದರೆ, ಅಂಥವನ ಸಹವಾಸ ನಿಮಗೆ ಸಲ್ಲದು. ಇದು ನನ್ನ ಪತ್ರದ ಉದ್ದೇಶ.</verse>
				<verse number="12">ಧರ್ಮಸಭೆಗೆ ಸೇರದೆ ಇರುವವರ ಬಗ್ಗೆ ತೀರ್ಪುಮಾಡುವುದು ನನ್ನ ಕೆಲಸವಲ್ಲ. ಅವರನ್ನು ಕುರಿತು ದೇವರೇ ತೀರ್ಪುನೀಡುವರು. ನೀವು ತೀರ್ಪುಮಾಡಬೇಕಾದುದು ಧರ್ಮಸಭೆಗೆ ಸೇರಿದವರನ್ನು ಕುರಿತು ದುರುಳನನ್ನು ನಿಮ್ಮಿಂದ ದೂರತಳ್ಳಿರಿ.</verse>
			</chapter>
			<chapter number="6">
				<verse number="1">ನಿಮ್ಮಲ್ಲಿ ಒಬ್ಬನಿಗೆ ಮತ್ತೊಬ್ಬನ ಮೇಲೆ ವ್ಯಾಜ್ಯವಿದ್ದರೆ ನ್ಯಾಯವಿಚಾರಣೆಗೆ ದೇವಜನರ ಮುಂದೆ ಹೋಗದೆ, ಅನ್ಯಜನರ ಮುಂದೆ ಹೋಗುವಷ್ಟು ಸೊಕ್ಕು ನಿಮಗೆಲ್ಲಿಂದ ಬಂದಿತು?</verse>
				<verse number="2">ದೇವಜನರು ಈ ಲೋಕಕ್ಕೆ ನ್ಯಾಯತೀರ್ಪು ಮಾಡುತ್ತಾರೆಂದು ನಿಮಗೆ ತಿಳಿಯದೋ? ಲೋಕವೇ ನಿಮ್ಮಿಂದ ತೀರ್ಪು ಪಡೆಯಬೇಕಾಗಿರುವಲ್ಲಿ ಸಣ್ಣಪುಟ್ಟ ವಿಷಯಗಳನ್ನು ತೀರ್ಮಾನಿಸಿಕೊಳ್ಳಲು ನೀವು ಅಸಮರ್ಥರೋ?</verse>
				<verse number="3">ದೇವದೂತರಿಗೂ ನಾವು ನ್ಯಾಯತೀರ್ಪು ಮಾಡುವೆವೆಂದು ನಿಮಗೆ ತಿಳಿಯದೋ? ಹೀಗಿರುವಲ್ಲಿ, ಈ ಜೀವನದ ಸಮಸ್ಯೆಗಳನ್ನು ಕುರಿತು ನ್ಯಾಯತೀರ್ಪು ಮಾಡುವುದು ಎಷ್ಟೋ ಸುಲಭವಲ್ಲವೇ?</verse>
				<verse number="4">ಇಂಥ ವಿಷಯಗಳು ತಲೆದೋರಿದಾಗ ಧರ್ಮಸಭೆಯಿಂದ ಮಾನ್ಯತೆ ಪಡೆಯದವರನ್ನು ಏಕೆ ನ್ಯಾಯತೀರ್ಪುಗಾರರನ್ನಾಗಿ ಮಾಡುತ್ತೀರಿ?</verse>
				<verse number="5">ಇದು ನಿಮಗೆ ನಾಚಿಕೆಗೇಡು! ಸಹೋದರರ ವ್ಯಾಜ್ಯವನ್ನು ತೀರ್ಮಾನಿಸಬಲ್ಲ ಜಾಣನು ನಿಮ್ಮಲ್ಲಿ ಒಬ್ಬನೂ ಇಲ್ಲವೇ?</verse>
				<verse number="6">ಸಹೋದರನು ಸಹೋದರನ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು, ಅದೂ ಅವಿಶ್ವಾಸಿಗಳ ಮುಂದೆ ಹೋಗುವುದು ಸರಿಯೇ?</verse>
				<verse number="7">ನಿಮ್ಮ ನಿಮ್ಮಲ್ಲಿರುವ ವ್ಯಾಜ್ಯಗಳೇ ನಿಮ್ಮ ಸೋಲಿನ ಸೂಚನೆಗಳು. ಅದಕ್ಕಿಂತ ಅನ್ಯಾಯವನ್ನು ಸಹಿಸಿಕೊಳ್ಳುವುದು ಒಳ್ಳೆಯದಲ್ಲವೇ? ಸುಲಿಗೆಗೆ ತುತ್ತಾದರೂ ಸಾವಧಾನದಿಂದ ಇರುವುದು ಒಳಿತಲ್ಲವೇ?</verse>
				<verse number="8">ಅದಕ್ಕೆ ಬದಲು ನೀವೇ ಅನ್ಯಾಯಮಾಡುತ್ತೀರಿ; ನೀವೇ ಸುಲಿಗೆಮಾಡುತ್ತೀರಿ; ಅದೂ ಸಹೋದರರಿಗೆ ಹೀಗೆ ಮಾಡುತ್ತೀರಿ;</verse>
				<verse number="9">ಅಧರ್ಮಿಗಳು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲವೆಂದು ನೀವು ಬಲ್ಲಿರಿ. ನಿಮ್ಮನ್ನು ನೀವೇ ವಂಚಿಸಿಕೊಳ್ಳಬೇಡಿ. ದುರಾಚಾರಿಗಳು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,</verse>
				<verse number="10">ಕಳ್ಳರು, ಲೋಭಿಗಳು, ಕುಡುಕರು, ಪರನಿಂದಕರು, ಸುಲಿಗೆಗಾರರು - ಇವರಾರೂ ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ.</verse>
				<verse number="11">ಹಿಂದೆ ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ. ಆದರೆ ಈಗ ಪ್ರಭು ಯೇಸುಕ್ರಿಸ್ತರ ನಾಮದಲ್ಲಿ ಮತ್ತು ದೇವರಾತ್ಮನಲ್ಲಿ ನೀವು ಶುದ್ಧರಾಗಿದ್ದೀರಿ, ಪುನೀತರಾಗಿದ್ದೀರಿ ಹಾಗೂ ದೇವರೊಡನೆ ಸತ್ಸಂಬಂಧ ಹೊಂದಿದ್ದೀರಿ.</verse>
				<verse number="12">“ಏನನ್ನು ಮಾಡಲೂ ನನಗೆ ಸ್ವಾತಂತ್ರ್ಯ ಇದೆ,” ಎಂದು ಹೇಳುವುದುಂಟು. ಆದರೆ ಎಲ್ಲವೂ ನನಗೆ ಪ್ರಯೋಜನಕರವಲ್ಲ. ಏನನ್ನು ಮಾಡಲೂ ನನಗೆ ಸ್ವಾತಂತ್ರ್ಯವಿದೆ. ಆದರೆ ನಾನು ಯಾವುದಕ್ಕೂ ಗುಲಾಮನಲ್ಲ.</verse>
				<verse number="13">“ಊಟ ಹೊಟ್ಟೆಗಾಗಿ, ಹೊಟ್ಟೆ ಊಟಕ್ಕಾಗಿ,” ಎಂದು ಹೇಳುವುದುಂಟು. ದೇವರು ಎರಡನ್ನೂ ನಾಶಗೊಳಿಸುವರು. ಆದರೆ ದೇಹವಿರುವುದು ದುರಾಚಾರಕ್ಕಲ್ಲ; ಪ್ರಭುವಿನ ಸೇವೆಗಾಗಿ. ಪ್ರಭುವೇ ದೇಹದ ಪರಿಪಾಲಕ.</verse>
				<verse number="14">ಪ್ರಭುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನೂ ತಮ್ಮ ಪರಾಕ್ರಮದಿಂದ ಎಬ್ಬಿಸುವರು.</verse>
				<verse number="15">ನಿಮ್ಮ ದೇಹಗಳು ಕ್ರಿಸ್ತಯೇಸುವಿನ ಅಂಗಗಳೆಂದು ನಿಮಗೆ ತಿಳಿಯದೇ? ಹಾಗಾದರೆ ನಾನು ಕ್ರಿಸ್ತಯೇಸುವಿನ ಅಂಗಗಳನ್ನು ತೆಗೆದು ವೇಶ್ಯೆಯ ಅಂಗಗಳನ್ನಾಗಿ ಮಾಡಬಹುದೇ? ಎಂದಿಗೂ ಇಲ್ಲ.</verse>
				<verse number="16">“ಇಬ್ಬರೂ ಒಂದೇ ಶರೀರವಾಗುತ್ತಾರೆ,” ಎಂದು ಬರೆಯಲಾಗಿದೆ. ವೇಶ್ಯೆಯ ಸಂಸರ್ಗ ಮಾಡುವವನು ಅವಳೊಂದಿಗೆ ಒಂದೇ ದೇಹವಾಗುತ್ತಾನೆ, ಎಂದು ನಿಮಗೆ ತಿಳಿಯದೇ?</verse>
				<verse number="17">ಆದರೆ ಪ್ರಭುವಿನ ಅನ್ಯೋನ್ಯತೆಯಲ್ಲಿ ಇರುವವನು ಅವರೊಂದಿಗೆ ಆಧ್ಯಾತ್ಮಿಕವಾಗಿ ಒಂದಾಗಿರುತ್ತಾನೆ.</verse>
				<verse number="18">ವ್ಯಭಿಚಾರದಿಂದ ದೂರ ಸರಿಯಿರಿ. ಮಾನವನು ಮಾಡುವ ಇತರ ಪಾಪಗಳು ದೇಹಕ್ಕೆ ಬಾಹಿರವಾದವುಗಳು. ವ್ಯಭಿಚಾರ ಮಾಡುವಾತನು ತನ್ನ ದೇಹಕ್ಕೇ ದ್ರೋಹ ಬಗೆಯುತ್ತಾನೆ.</verse>
				<verse number="19">ದೇವರು ನಿಮಗೆ ಅನುಗ್ರಹಿಸಿರುವ ಪವಿತ್ರಾತ್ಮರಿಗೆ ನಿಮ್ಮ ದೇಹ ಗರ್ಭಗುಡಿಯಾಗಿದೆ; ಆ ಪವಿತ್ರಾತ್ಮ ನಿಮ್ಮಲ್ಲಿ ವಾಸಮಾಡುತ್ತಿದ್ದಾರೆ ಎಂಬುದು ನಿಮಗೆ ಗೊತ್ತಿಲ್ಲವೇ? ನೀವು ನಿಮ್ಮ ಸ್ವಂತ ಸೊತ್ತಲ್ಲ.</verse>
				<verse number="20">ಏಕೆಂದರೆ, ನೀವು ಕ್ರಯಕ್ಕೆ ಕೊಳ್ಳಲಾದವರು. ಆದ್ದರಿಂದ ನಿಮ್ಮ ದೇಹದಲ್ಲಿ ಆ ದೇವರ ಮಹಿಮೆ ಬೆಳಗುವಂತೆ ಮಾಡಿರಿ.</verse>
			</chapter>
			<chapter number="7">
				<verse number="1">ನೀವು ಬರೆದು ಕೇಳಿರುವ ವಿಷಯಗಳ ಬಗ್ಗೆ ನಾನು ಹೇಳುವುದೇನೆಂದರೆ: ಒಬ್ಬ ವ್ಯಕ್ತಿ ಸ್ತ್ರೀಯೊಡನೆ ಲೈಂಗಿಕ ಸಂಪರ್ಕವನ್ನು ಇಟ್ಟುಕೊಳ್ಳದಿರುವುದು ಒಳ್ಳೆಯದು.</verse>
				<verse number="2">ಲೈಂಗಿಕ ಪ್ರಲೋಭನೆಗಳು ಪ್ರಬಲವಾಗಿರುವುದರಿಂದ ಪ್ರತಿಯೊಬ್ಬನಿಗೂ ಸ್ವಂತ ಸತಿ ಇರಲಿ, ಪ್ರತಿಯೊಬ್ಬಳಿಗೂ ಸ್ವಂತ ಪತಿ ಇರಲಿ.</verse>
				<verse number="3">ಪತಿಯಾದವನು ತನ್ನ ಸತಿಗೆ ಸಲ್ಲತಕ್ಕ ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲಿ. ಅಂತೆಯೇ, ಸತಿಯಾದವಳು ತನ್ನ ಪತಿಗೆ ಸಲ್ಲತಕ್ಕ ದಾಂಪತ್ಯ ಕರ್ತವ್ಯಗಳನ್ನು ನೆರವೇರಿಸಲಿ.</verse>
				<verse number="4">ಸತಿಗೆ ತನ್ನ ದೇಹದ ಮೇಲೆ ಅಧಿಕಾರವಿಲ್ಲ. ಆದರೆ ಪತಿಗೆ ಆ ಅಧಿಕಾರವಿದೆ. ಪತಿಗೆ ತನ್ನ ದೇಹದ ಮೇಲೆ ಅಧಿಕಾರವಿಲ್ಲ, ಆದರೆ ಸತಿಗೆ ಆ ಅಧಿಕಾರವಿದೆ.</verse>
				<verse number="5">ಆದುದರಿಂದ ಸತಿಪತಿಯರು ಒಬ್ಬರಿಗೊಬ್ಬರು ದಾಂಪತ್ಯಕರ್ತವ್ಯಗಳನ್ನು ನೆರವೇರಿಸಲು ನಿರಾಕರಿಸಬಾರದು. ಧ್ಯಾನ, ಪ್ರಾರ್ಥನೆಗಳಲ್ಲಿ ನಿರತರಾಗಿರಲು, ಸ್ವಲ್ಪಕಾಲ ಒಬ್ಬರನ್ನೊಬ್ಬರು ಅಗಲಿರಬಹುದು. ಆದರೆ ಅದಕ್ಕೆ ಪರಸ್ಪರ ಸಮ್ಮತಿ ಇರಬೇಕು. ಅನಂತರ ಒಂದುಗೂಡಬೇಕು. ಇಲ್ಲದೆ ಹೋದರೆ, ನಿಮ್ಮಲ್ಲಿ ಸಂಯಮ ಇಲ್ಲದಿರುವುದನ್ನು ಕಂಡು ಸೈತಾನನು ಪಾಪಕ್ಕೆ ಪ್ರಚೋದಿಸಬಹುದು.</verse>
				<verse number="6">ಇದು ನನ್ನ ಆಜ್ಞೆಯಲ್ಲ, ಅನುಮತಿಯಷ್ಟೆ.</verse>
				<verse number="7">ಎಲ್ಲರೂ ನಾನಿರುವಂತೆ ಇರಬೇಕೆಂಬುದು ನನ್ನ ಅಭಿಲಾಷೆ. ಆದರೆ ದೇವರು ಪ್ರತಿಯೊಬ್ಬನಿಗೂ ವಿಶಿಷ್ಟ ವರವನ್ನು ದಯಪಾಲಿಸಿದ್ದಾರೆ. ಒಬ್ಬನಿಗೆ ಒಂದು ವರವಾದರೆ, ಮತ್ತೊಬ್ಬನಿಗೆ ಇನ್ನೊಂದು ವರವುಂಟು.</verse>
				<verse number="8">ಅವಿವಾಹಿತರಿಗೂ ವಿಧವೆಯರಿಗೂ ನನ್ನ ಬುದ್ಧಿಮಾತು ಯಾವುದೆಂದರೆ; ನಾನಿರುವಂತೆಯೇ ಇರುವುದು ಅವರಿಗೆ ಒಳ್ಳೆಯದು.</verse>
				<verse number="9">ಅವರಿಗೆ ಸಂಯಮ ಇಲ್ಲದಿದ್ದರೆ ಮದುವೆಮಾಡಿಕೊಳ್ಳಲಿ. ಕಾಮತಾಪದಿಂದ ಬೆಂದುಹೋಗುವುದಕ್ಕಿಂತ ಮದುವೆಮಾಡಿಕೊಳ್ಳುವುದೇ ಲೇಸು.</verse>
				<verse number="10">ವಿವಾಹಿತರಿಗೆ ನನ್ನದೊಂದು ಆಜ್ಞೆ: ನಿಜಕ್ಕೂ ಇದು ನನ್ನದಲ್ಲ, ಪ್ರಭುವಿನ ಆಜ್ಞೆ. ಸತಿಯು ತನ್ನ ಪತಿಯನ್ನು ಬಿಟ್ಟಗಲದಿರಲಿ.</verse>
				<verse number="11">ಒಂದು ವೇಳೆ ಅಗಲಿದರೆ ಮತ್ತೆ ಮದುವೆಯಾಗದಿರಲಿ. ಇಲ್ಲವೆ, ತನ್ನ ಪತಿಯೊಂದಿಗೆ ಸಂಧಾನಮಾಡಿಕೊಳ್ಳಲಿ. ಅಂತೆಯೇ ಪತಿಯಾದವನು ತನ್ನ ಸತಿಯನ್ನು ಬಿಟ್ಟುಬಿಡದಿರಲಿ.</verse>
				<verse number="12">ಮಿಕ್ಕವರಿಗೆ ನಾನು ಹೇಳುವುದೇನೆಂದರೆ: ಇದು ನನ್ನ ಮಾತು, ಪ್ರಭುವಿನದಲ್ಲ: ಒಬ್ಬ ಸಹೋದರನಿಗೆ ಕ್ರೈಸ್ತವಿಶ್ವಾಸಿಯಲ್ಲದ ಸತಿ ಇದ್ದರೆ, ಆಕೆ ಅವನೊಡನೆ ದಾಂಪತ್ಯ ಜೀವನ ನಡೆಸಲು ಒಪ್ಪಿದರೆ, ಆಕೆಯನ್ನು ಬಿಟ್ಟುಬಿಡಬಾರದು.</verse>
				<verse number="13">ಹಾಗೆಯೇ ಒಬ್ಬ ಕ್ರೈಸ್ತ ಸಹೋದರಿಗೆ ಕ್ರೈಸ್ತವಿಶ್ವಾಸಿಯಲ್ಲದ ಪತಿ ಇದ್ದು ಅವನು ಆಕೆಯೊಂದಿಗೆ ದಾಂಪತ್ಯಜೀವನ ನಡೆಸಲು ಒಪ್ಪಿದರೆ, ಆಕೆ ಅವನನ್ನು ಬಿಟ್ಟುಬಿಡಬಾರದು.</verse>
				<verse number="14">ಏಕೆಂದರೆ, ಕ್ರೈಸ್ತವಿಶ್ವಾಸಿಯಾದ ಸತಿಯ ಮುಖಾಂತರ ಪತಿ ದೇವಜನರೊಂದಿಗೆ ಸಂಬಂಧಪಡೆಯುತ್ತಾನೆ. ಅಂತೆಯೇ ಕ್ರೈಸ್ತವಿಶ್ವಾಸಿಯಾದ ಪತಿಯ ಮುಖಾಂತರ ಸತಿ ದೇವಜನರೊಂದಿಗೆ ಸಂಬಂಧಪಡೆಯುತ್ತಾಳೆ. ಇಲ್ಲದಿದ್ದರೆ ನಿಮ್ಮ ಮಕ್ಕಳು ಅಪವಿತ್ರರಾಗುತ್ತಿದ್ದರು. ಈಗಲಾದರೋ ಅವರು ದೇವಜನರೊಂದಿಗೆ ಸಂಬಂಧ ಉಳ್ಳವರಾಗಿದ್ದಾರೆ.</verse>
				<verse number="15">ಒಂದು ವೇಳೆ, ವಿಶ್ವಾಸವಿಲ್ಲದ ಸತಿಯಾಗಲಿ, ಪತಿಯಾಗಲಿ ಬೇರ್ಪಟ್ಟುಹೋಗಬೇಕೆಂದಿದ್ದರೆ ಹೋಗಲಿ. ಇಂಥ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನು, ಇಲ್ಲವೆ ಸಹೋದರಿಯು ವಿವಾಹ ಬಂಧನದಿಂದ ವಿಮುಕ್ತರಾಗುತ್ತಾರೆ. ಏಕೆಂದರೆ, ದೇವರು ನಿಮ್ಮನ್ನು ಶಾಂತಿಸಮಾಧಾನದಿಂದ ಬಾಳಲು ಕರೆದಿದ್ದಾರೆ.</verse>
				<verse number="16">ಅದೂ ಅಲ್ಲದೆ ಸ್ತ್ರೀಯೇ, ಕ್ರೈಸ್ತವಿಶ್ವಾಸಿಯಲ್ಲದ ನಿನ್ನ ಪತಿಯನ್ನು ಉದ್ಧಾರಮಾಡುವೆಯೆಂದು ಹೇಗೆ ಹೇಳಬಲ್ಲೆ? ಪುರುಷನೇ, ಕ್ರೈಸ್ತವಿಶ್ವಾಸಿಯಲ್ಲದ ನಿನ್ನ ಸತಿಯನ್ನು ಉದ್ಧಾರಮಾಡುವೆಯೆಂದು ಹೇಗೆ ಹೇಳಬಲ್ಲೆ?</verse>
				<verse number="17">ದೇವರ ಕರೆಗೆ ಮತ್ತು ಪ್ರಭು ನೀಡಿರುವ ವರದಾನಗಳಿಗೆ ಅನುಗುಣವಾಗಿ ಪ್ರತಿಯೊಬ್ಬನೂ ಬಾಳುವೆ ನಡೆಸಲಿ. ಎಲ್ಲ ಸಭೆಗಳಿಗೂ ನಾನಿದನ್ನೇ ವಿಧಿಸಿದ್ದೇನೆ.</verse>
				<verse number="18">ಸುನ್ನತಿಮಾಡಿಸಿಕೊಂಡವನು ದೇವರ ಕರೆಹೊಂದಿದ್ದರೆ ಅವನು ಸುನ್ನತಿಮಾಡಿಸಿಕೊಂಡದ್ದಕ್ಕಾಗಿ ಚಿಂತಿಸಬೇಕಾಗಿಲ್ಲ. ಸುನ್ನತಿ ಮಾಡಿಸಿಕೊಳ್ಳದವನು ದೇವರ ಕರೆಹೊಂದಿದ್ದರೆ ಅವನು ಸುನ್ನತಿ ಮಾಡಿಸಿಕೊಳ್ಳುವ ಅವಶ್ಯಕತೆಯಿಲ್ಲ.</verse>
				<verse number="19">ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ, ದೇವರ ಆಜ್ಞೆಗಳಿಗೆ ವಿಧೇಯನಾಗಿರುವುದೇ ಮುಖ್ಯ.</verse>
				<verse number="20">ದೇವರು ಕರೆದಾಗ ಒಬ್ಬನು ಯಾವ ಸ್ಥಿತಿಯಲ್ಲಿದ್ದನೋ ಅದೇ ಸ್ಥಿತಿಯಲ್ಲಿ ಮುಂದುವರಿಯಲಿ.</verse>
				<verse number="21">ದೇವರು ಕರೆದಾಗ ನೀನು ದಾಸ್ಯದಲ್ಲಿದ್ದೆಯೋ? ಚಿಂತೆಯಿಲ್ಲ. ಆದರೆ ಸ್ವತಂತ್ರನಾಗುವ ಅವಕಾಶ ದೊರೆತರೆ ಅದನ್ನು ಬಿಡಬೇಡ.</verse>
				<verse number="22">ಪ್ರಭುವಿನಿಂದ ಕರೆಹೊಂದಿದವನು ದಾಸನಾಗಿದ್ದರೂ ಪ್ರಭುವಿನಲ್ಲಿ ಅವನು ಸ್ವತಂತ್ರನೆ. ಅದೇ ಮೇರೆಗೆ ಸ್ವತಂತ್ರನಾದವನು ಕ್ರಿಸ್ತಯೇಸುವಿನಿಂದ ಕರೆಹೊಂದಿದ್ದರೆ ಅವನು ಕ್ರಿಸ್ತಯೇಸುವಿನ ದಾಸನೇ ಆಗುತ್ತಾನೆ.</verse>
				<verse number="23">ನಿಮ್ಮನ್ನು ಕ್ರಯಕ್ಕೆ ಕೊಳ್ಳಲಾಗಿದೆ. ಆದ್ದರಿಂದ ಮಾನವರಿಗೆ ದಾಸರಾಗಬೇಡಿ.</verse>
				<verse number="24">ಪ್ರಿಯ ಸಹೋದರರೇ, ದೇವರು ಕರೆದಾಗ ಒಬ್ಬನು ಯಾವ ಸ್ಥಿತಿಯಲ್ಲಿ ಇದ್ದನೋ ಅದೇ ಸ್ಥಿತಿಯಲ್ಲಿ ದೇವರೊಂದಿಗೆ ಮುನ್ನಡೆಯಲಿ.</verse>
				<verse number="25">ಅವಿವಾಹಿತರ ಬಗ್ಗೆ ಪ್ರಭುವಿನಿಂದ ಬಂದ ಕಟ್ಟಳೆ ಯಾವುದೂ ನನ್ನಲ್ಲಿಲ್ಲ. ಪ್ರಭುವಿನ ಕೃಪೆಯಿಂದ ನಂಬಿಕೆಗೆ ಅರ್ಹನಾದ ವ್ಯಕ್ತಿಯಂತೆ ನನ್ನ ಅಭಿಪ್ರಾಯಗಳನ್ನು ನಿಮ್ಮ ಮುಂದೆ ಇಡುತ್ತೇನೆ.</verse>
				<verse number="26">ಇಂದಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಒಬ್ಬನು ತಾನು ಇದ್ದ ಸ್ಥಿತಿಯಲ್ಲೇ ಇರುವುದು ಉತ್ತಮವೆಂದು ಭಾವಿಸುತ್ತೇನೆ.</verse>
				<verse number="27">ನಿನಗೆ ವಿವಾಹವಾಗಿದೆಯೋ? ವಿವಾಹ ವಿಚ್ಛೇದನಕ್ಕೆ ಯತ್ನಿಸಬೇಡ. ನೀನು ಅವಿವಾಹಿತನೋ? ವಿವಾಹವಾಗಲು ಅವಸರಪಡಬೇಡ.</verse>
				<verse number="28">ಹಾಗೇನಾದರೂ ನೀನು ವಿವಾಹ ಮಾಡಿಕೊಂಡರೆ ಅದು ಪಾಪವಲ್ಲ. ಅಂತೆಯೇ, ಅವಿವಾಹಿತ ಸ್ತ್ರೀಯೊಬ್ಬಳು ವಿವಾಹ ಮಾಡಿಕೊಂಡರೆ ಅದು ಪಾಪವಲ್ಲ. ಆದರೆ ದಂಪತಿಗಳಿಗೆ ತಾಪತ್ರಯಗಳು ಅನೇಕ. ಇವುಗಳು ನಿಮ್ಮನ್ನು ಬಾಧಿಸದಿರಲೆಂಬುದೇ ನನ್ನ ಹಾರೈಕೆ.</verse>
				<verse number="29">ಪ್ರಿಯ ಸಹೋದರರೇ, ನನ್ನ ಅಭಿಪ್ರಾಯ ಇದು: ಉಳಿದಿರುವ ಕಾಲವು ಕೊಂಚ ಮಾತ್ರ. ಆದ್ದರಿಂದ ಮದುವೆಯಾದವರು ಮದುವೆಯಾಗದವರೋ ಎಂಬಂತೆ ನಡೆದುಕೊಳ್ಳಲಿ.</verse>
				<verse number="30">ದುಃಖಿತರು ದುಃಖವಿಲ್ಲದವರಂತೆ, ಸಂತೋಷಭರಿತರು ಸಂತೋಷರಹಿತರಂತೆ ಹಾಗು ಕೊಂಡುಕೊಳ್ಳುವವರು ಕೊಂಡದ್ದು ತಮ್ಮದಲ್ಲವೋ ಎಂಬಂತೆ ನಡೆದುಕೊಳ್ಳಲಿ.</verse>
				<verse number="31">ಲೋಕದ ವ್ಯವಹಾರದಲ್ಲಿ ಇರುವವರು ಅದರಲ್ಲಿಯೇ ತಲ್ಲೀನರಾಗದಿರಲಿ. ಏಕೆಂದರೆ, ಲೋಕದ ರೂಪರೇಷೆಗಳು ಗತಿಸಿಹೋಗುತ್ತವೆ.</verse>
				<verse number="32">ನೀವು ಚಿಂತೆಯಿಲ್ಲದೆ ಇರಬೇಕೆಂಬುದೇ ನನ್ನ ಇಷ್ಟ. ಮದುವೆಯಾಗದವನು ಪ್ರಭುವಿನ ಸೇವೆಯಲ್ಲಿ ತತ್ಪರನಾಗಿರುತ್ತಾನೆ; ಪ್ರಭುವನ್ನು ಮೆಚ್ಚಿಸಲು ಶ್ರಮಿಸುತ್ತಾನೆ.</verse>
				<verse number="33">ಮದುವೆ ಆದವನು ಲೋಕವ್ಯವಹಾರಗಳಲ್ಲಿ ಮಗ್ನನಾಗುತ್ತಾನೆ. ತನ್ನ ಸತಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಾನೆ.</verse>
				<verse number="34">ಅಂಥವನು ಉಭಯ ಸಂಕಟಕ್ಕೆ ಸಿಕ್ಕಿಕೊಳ್ಳುತ್ತಾನೆ. ಮದುವೆಯಾಗದ ಮಹಿಳೆ ಅಥವಾ ಕನ್ನಿಕೆ ಪ್ರಭುವಿನ ಸೇವೆಯಲ್ಲಿ ನಿರತಳಾಗಿರುತ್ತಾಳೆ. ದೇಹಾತ್ಮಗಳೆರಡನ್ನೂ ಪ್ರಭುವಿಗೆ ಮೀಸಲಾಗಿಡುತ್ತಾಳೆ. ಆದರೆ ವಿವಾಹಿತ ಸ್ತ್ರೀ ಲೋಕವ್ಯವಹಾರಗಳಲ್ಲಿ ಮಗ್ನಳಾಗಿರುತ್ತಾಳೆ. ತನ್ನ ಪತಿಯನ್ನು ಮೆಚ್ಚಿಸಲು ಪ್ರಯತ್ನಿಸುತ್ತಾಳೆ.</verse>
				<verse number="35">ನಿಮ್ಮನ್ನು ಬಂಧಿಸಲು ಅಲ್ಲ, ಬೆಂಬಲಿಸಲು ಇದನ್ನು ಹೇಳುತ್ತಿದ್ದೇನೆ. ನೀವು ಸಜ್ಜನರಾಗಿ ನಡೆದುಕೊಂಡು, ಭಿನ್ನಭಾವವಿಲ್ಲದೆ ಪ್ರಭುವಿನ ಪಾದಸೇವೆ ಮಾಡಬೇಕೆಂಬುದೇ ನನ್ನ ಆಶೆ.</verse>
				<verse number="36">ಒಬ್ಬನು ತನಗೆ ನಿಶ್ಚಿತವಾದ ಕನ್ಯೆಯೊಡನೆ ಅನುಚಿತ ರೀತಿಯಲ್ಲಿ ವರ್ತಿಸುತ್ತಿರಬಹುದು; ಅವನಿಗೆ ಸಂಯಮ ತಪ್ಪುವಂತಿದ್ದರೆ, ತಾನು ಆಶಿಸುವಂತೆ ಅವನು ಮದುವೆಮಾಡಿಕೊಳ್ಳಲಿ, ಅದು ಪಾಪವಲ್ಲ.</verse>
				<verse number="37">ಆದರೆ ಅವನು ಯಾರ ಒತ್ತಾಯಕ್ಕೂ ಮಣಿಯದೆ ದೃಢಚಿತ್ತನಾಗಿದ್ದು, ತನಗೆ ನಿಶ್ಚಿತಳಾದ ಕನ್ಯೆಯೊಡನೆ ಮದುವೆಯಾಗುವುದು ಬೇಡವೆಂದು ತೀರ್ಮಾನಿಸಿಕೊಂಡರೆ ಮತ್ತು ತನ್ನ ಸಂಯಮವನ್ನು ಹತೋಟಿಯಲ್ಲಿಟ್ಟುಕೊಂಡಿದ್ದರೆ ಅವನು ಅಂತೆಯೇ ಮಾಡಲಿ. ಹೀಗೆ, ಮದುವೆ ಆಗದೆ ಇರುವುದು ಒಳ್ಳೆಯದು.</verse>
				<verse number="38">ಈ ರೀತಿ ನಿಶ್ಚಯವಾದ ಕನ್ಯೆಯನ್ನು ಮದುವೆಮಾಡಿಕೊಳ್ಳುವುದು ಒಳ್ಳೆಯದೇ, ಮದುವೆ ಮಾಡಿಕೊಳ್ಳದಿರುವುದು ಇನ್ನಷ್ಟು ಒಳ್ಳೆಯದೇ.</verse>
				<verse number="39">ಪತಿ ಬದುಕಿರುವವರೆಗೂ ಸತಿ ಅವನಿಗೆ ಬಂಧಿತಳು. ಅವನು ಸತ್ತರೆ ತಾನು ಇಷ್ಟಪಟ್ಟವನನ್ನು ಮತ್ತೆ ಮದುವೆ ಆಗಲು ಸ್ವತಂತ್ರಳು. ಆದರೆ ಅವನು ಕ್ರೈಸ್ತವಿಶ್ವಾಸಿಯಾಗಿರಬೇಕು.</verse>
				<verse number="40">ಆಕೆ ವಿವಾಹವಾಗದೆ ಹಾಗೇ ಉಳಿದರೆ ಹೆಚ್ಚು ಭಾಗ್ಯವಂತಳು. ಇದು ನನ್ನ ಅಭಿಪ್ರಾಯ. ಆದರೂ ದೇವರ ಆತ್ಮದ ಪ್ರೇರಣೆಯಿಂದ ಇದನ್ನು ಹೇಳುತ್ತಿದ್ದೇನೆ, ಎಂಬುದೇ ನನ್ನ ನಂಬಿಕೆ.</verse>
			</chapter>
			<chapter number="8">
				<verse number="1">ವಿಗ್ರಹಗಳಿಗೆ ನೈವೇದ್ಯಮಾಡಿದ ಆಹಾರಪದಾರ್ಥಗಳ ವಿಷಯವಾಗಿ ನಾನು ಹೇಳುವುದೇನೆಂದರೆ: “ನಮಗೆಲ್ಲರಿಗೂ ಜ್ಞಾನೋದಯವಾಗಿದೆ” ಎಂದು ಹೇಳಿಕೊಳ್ಳುತ್ತೀರಿ. ಜ್ಞಾನವು ನಮ್ಮನ್ನು ಅಹಂಕಾರಿಗಳನ್ನಾಗಿ ಮಾಡುತ್ತದೆ. ಪ್ರೀತಿಯಾದರೋ ಭಕ್ತಿಯನ್ನು ವೃದ್ಧಿಗೊಳಿಸುತ್ತದೆ.</verse>
				<verse number="2">ಯಾರಾದರೂ ತಾನು ಬಲ್ಲವನೆಂದು ಕೊಚ್ಚಿಕೊಳ್ಳುವುದಾದರೆ ತಾನು ತಿಳಿಯಬೇಕಾದುದನ್ನು ಅವನು ಸರಿಯಾಗಿ ತಿಳಿದಿರುವುದಿಲ್ಲ.</verse>
				<verse number="3">ಆದರೆ ದೇವರನ್ನು ಪ್ರೀತಿಸುವವನನ್ನು ದೇವರು ಗುರುತಿಸುತ್ತಾರೆ.</verse>
				<verse number="4">ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವ ಬಗ್ಗೆ ನನ್ನ ಅಭಿಪ್ರಾಯ ಹೀಗಿದೆ: ವಿಗ್ರಹಗಳಿಗೆ ನಿಜವಾದ ಅಸ್ತಿತ್ವವಿಲ್ಲ. ದೇವರು ಒಬ್ಬರೇ ಹೊರತು ಬೇರೆ ದೇವರಿಲ್ಲ. ಇದು ನಮಗೆ ತಿಳಿದ ವಿಷಯ.</verse>
				<verse number="5">“ದೇವರುಗಳು” ಎನಿಸಿಕೊಳ್ಳುವವರು ಇಹಪರಗಳಲ್ಲಿ ಇರಬಹುದು; ಅಂಥ ಹಲವಾರು “ದೇವರು\ಗಳನ್ನೂ “ಪ್ರಭು\ಗಳನ್ನೂ ಪೂಜಿಸುವುದುಂಟು.</verse>
				<verse number="6">ಆದರೆ ನಮಗೆ ಒಬ್ಬರೇ ದೇವರು. ಅವರು ನಮ್ಮ ಪರಮ ಪಿತ; ಎಲ್ಲ ಸೃಷ್ಟಿಗೂ ಮೂಲಕರ್ತ, ನಾವಿರುವುದು ಅವರಿಗಾಗಿಯೇ. ನಮಗೆ ಒಬ್ಬರೇ ಪ್ರಭು; ಅವರೇ ಯೇಸುಕ್ರಿಸ್ತ. ಅವರ ಮುಖಾಂತರವೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ.</verse>
				<verse number="7">ಆದರೆ ಎಲ್ಲರಿಗೂ ಇದರ ಅರಿವಿಲ್ಲ. ಕೆಲವರು ಸಾಂಪ್ರದಾಯಕವಾಗಿ ಬಂದ ವಿಗ್ರಹಾರಾಧನೆಯಲ್ಲಿ ಭಾಗವಹಿಸಿ, ವಿಗ್ರಹಕ್ಕೆ ಅರ್ಪಿತವಾದ ನೈವೇದ್ಯಪದಾರ್ಥವನ್ನು ತಿನ್ನುತ್ತಾರೆ. ಆದರೆ ಅವರ ಮನಸ್ಸಾಕ್ಷಿ ದುರ್ಬಲವಾಗಿರುವುದರಿಂದ ತಾವು ಕಲುಷಿತರಾದೆವೆಂದು ಭಾವಿಸಿಕೊಳ್ಳುತ್ತಾರೆ.</verse>
				<verse number="8">ನಾವು ತಿನ್ನುವ ಆಹಾರ ನಮ್ಮನ್ನು ದೇವರ ಸನ್ನಿಧಿಗೆ ಸೇರಿಸಲಾರದು. ಅದನ್ನು ತಿನ್ನದಿರುವುದರಿಂದ ನಮಗೆ ನಷ್ಟವಿಲ್ಲ, ತಿಂದರೆ ಲಾಭವಿಲ್ಲ.</verse>
				<verse number="9">ಆದರೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸುವಾಗ ದುರ್ಬಲಮನಸ್ಸುಳ್ಳ ಸೋದರನ ವಿಶ್ವಾಸಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಿರಿ.</verse>
				<verse number="10">ನೈಜ ಅರಿವುಳ್ಳವನೆಂದು ಹೇಳಿಕೊಳ್ಳುವ ನೀನು ವಿಗ್ರಹದ ಗುಡಿಯಲ್ಲಿ ಊಟಕ್ಕೆ ಕುಳಿತಿರುವುದನ್ನು ದುರ್ಬಲ ಮನಸ್ಸಾಕ್ಷಿಯುಳ್ಳ ಸೋದರನು ಕಂಡರೆ, ಅವನು ಸಹ ನೈವೇದ್ಯಮಾಡಿದ ಪದಾರ್ಥವನ್ನು ತಿನ್ನಲು ಧೈರ್ಯಗೊಳ್ಳಲಾರನೇ?</verse>
				<verse number="11">ಈ ನಿನ್ನ ಅರಿವಿನಿಂದ ದುರ್ಬಲ ಸೋದರನು ನಾಶಕ್ಕೆ ಗುರಿಯಾಗುತ್ತಾನೆ. ಯೇಸುಕ್ರಿಸ್ತರು ಅವನಿಗಾಗಿಯೂ ಪ್ರಾಣತ್ಯಾಗ ಮಾಡಲಿಲ್ಲವೇ?</verse>
				<verse number="12">ಹೀಗೆ ನೀವು ನಿಮ್ಮ ಸಹೋದರರ ದುರ್ಬಲ ಮನಸ್ಸಾಕ್ಷಿಯನ್ನು ನೋಯಿಸಿ, ಅವರ ವಿರುದ್ಧ ಪಾಪ ಕಟ್ಟಿಕೊಳ್ಳುವುದರಿಂದ ಯೇಸುಕ್ರಿಸ್ತರ ವಿರುದ್ಧವೇ ಪಾಪಮಾಡುತ್ತೀರಿ.</verse>
				<verse number="13">ನಾನು ತಿನ್ನುವ ಆಹಾರ ನನ್ನ ಸಹೋದರನ ವಿಶ್ವಾಸಕ್ಕೆ ಅಡ್ಡಿಯಾಗುವುದಾದರೆ ಎಂದಿಗೂ ನಾನದನ್ನು ತಿನ್ನಲಾರೆ, ಅವನ ವಿಶ್ವಾಸಕ್ಕೆ ಅಡ್ಡಿಯನ್ನು ತರಲಾರೆ.</verse>
			</chapter>
			<chapter number="9">
				<verse number="1">ನಾನು ಸ್ವತಂತ್ರನಲ್ಲವೇ? ಪ್ರೇಷಿತನಲ್ಲವೇ? ನಮ್ಮ ಪ್ರಭು ಯೇಸುವನ್ನು ಕಂಡವನಲ್ಲವೇ? ಪ್ರಭುವಿನಲ್ಲಿ ನಾನು ಮಾಡಿದ ಸೇವೆಯ ಪ್ರತಿಫಲ ನೀವಲ್ಲವೇ?</verse>
				<verse number="2">ಇತರರಿಗೆ ನಾನು ಪ್ರೇಷಿತನಲ್ಲದಿದ್ದರೂ ನಿಮಗಂತೂ ನಾನು ಪ್ರೇಷಿತನೇ. ನಾನು ಪ್ರೇಷಿತನು ಎಂಬುದಕ್ಕೆ ಪ್ರಭುವಿಗೆ ಸೇರಿದವರಾದ ನೀವೇ ಜೀವಂತ ಸಾಕ್ಷಿಗಳು.</verse>
				<verse number="3">ನನ್ನನ್ನು ಟೀಕಿಸುವವರಿಗೆ ನನ್ನ ಉತ್ತರ ಇದು:</verse>
				<verse number="4">ನಿಮ್ಮಿಂದ ಅನ್ನಪಾನಗಳನ್ನು ಪಡೆಯಲು ನನಗೆ ಹಕ್ಕಿಲ್ಲವೇ?</verse>
				<verse number="5">ಮಿಕ್ಕ ಪ್ರೇಷಿತರಂತೆ, ಪ್ರಭುವಿನ ಸಹೋದರರಂತೆ, ಕೇಫನಂತೆ ನಾನು ಸಹ ಕ್ರೈಸ್ತವಿಶ್ವಾಸಿಯೊಬ್ಬಳನ್ನು ಮದುವೆಮಾಡಿಕೊಂಡು ಆಕೆಯೊಡನೆ ಪ್ರಯಾಣ ಕೈಗೊಳ್ಳಲು ನನಗೆ ಹಕ್ಕಿಲ್ಲವೇ?</verse>
				<verse number="6">ಜೀವನೋಪಾಯಕ್ಕಾಗಿ ಬಾರ್ನಬ ಮತ್ತು ನಾನು ಮಾತ್ರ ದುಡಿಯಬೇಕೇ?</verse>
				<verse number="7">ಯಾವ ಸೈನಿಕ ಸ್ವಂತ ಖರ್ಚಿನಿಂದ ಸಮರಕ್ಕೆ ನಿಲ್ಲುತ್ತಾನೆ? ಯಾವ ತೋಟಗಾರ ತನ್ನ ಸ್ವಂತ ದ್ರಾಕ್ಷಿಯ ತೋಟದಿಂದ ದ್ರಾಕ್ಷಿಯ ಫಲವನ್ನು ತಿನ್ನದಿರುತ್ತಾನೆ? ಯಾವ ಗೌಳಿಗ ತಾನು ಸಾಕಿದ ಹಸುವಿನ ಹಾಲನ್ನು ಕುಡಿಯದಿರುತ್ತಾನೆ?</verse>
				<verse number="8">ಇವು ಕೇವಲ ಲೋಕರೂಢಿಯ ಮಾತುಗಳಲ್ಲ. ಧರ್ಮಶಾಸ್ತ್ರವೂ ಇದನ್ನು ಅನುಮೋದಿಸುತ್ತದೆ.</verse>
				<verse number="9">“ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬೇಡ,” ಎಂದು ಮೋಶೆಯ ಧರ್ಮಶಾಸ್ತ್ರದಲ್ಲೇ ಲಿಖಿತವಾಗಿದೆ. ಇಲ್ಲಿ ದೇವರಿಗೆ ಎತ್ತಿನ ಮೇಲೆ ಚಿಂತೆಯೇ? ಇಲ್ಲ.</verse>
				<verse number="10">ಇದನ್ನು ನಮ್ಮ ಹಿತಚಿಂತನೆಯಿಂದ ಹೇಳಲಾಗಿದೆ; ಅದೇ ಉದ್ದೇಶದಿಂದ ಬರೆಯಲಾಗಿದೆ. ಹೌದು, ಉಳುವವನೂ ಒಕ್ಕುವವನೂ ಕಾಳುಬೆಳೆಯಲ್ಲಿ ಪಾಲುಪಡೆಯುವ ಉದ್ದೇಶದಿಂದಲೇ ದುಡಿಯುತ್ತಾರೆ.</verse>
				<verse number="11">ನಿಮ್ಮಲ್ಲಿ ಆಧ್ಯಾತ್ಮಿಕ ಬೀಜವನ್ನು ಬಿತ್ತನೆಮಾಡಿದ ನಾವು ಪ್ರತಿಫಲವಾಗಿ ದೈನಂದಿನ ಅಗತ್ಯಗಳನ್ನು ಅಪೇಕ್ಷಿಸುವುದು ಅತಿಯಾಯಿತೇ?</verse>
				<verse number="12">ಇತರರಿಗೆ ನಿಮ್ಮ ಮೇಲೆ ಇಂಥ ಹಕ್ಕಿದ್ದರೆ ಅದಕ್ಕಿಂತಲೂ ಹೆಚ್ಚು ಹಕ್ಕು ನಮಗಿರಬೇಕಲ್ಲವೇ? ಆದರೂ ನಾವು ಈ ಹಕ್ಕನ್ನು ಚಲಾಯಿಸಲೇ ಇಲ್ಲ. ಬದಲಿಗೆ, ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯಾವ ಅಡ್ಡಿಯೂ ಬಾರದಿರಲೆಂದು ಎಲ್ಲವನ್ನು ಸಹಿಸಿಕೊಂಡೆವು.</verse>
				<verse number="13">ದೇವಾಲಯದ ಸೇವೆಯಲ್ಲಿರುವವರು ದೇವಾಲಯದ ಆದಾಯದಿಂದ ಜೀವಿಸುತ್ತಾರೆ. ಬಲಿಪೀಠದ ಬಳಿ ಸೇವೆಮಾಡುವವರು ಅರ್ಪಿತವಾದ ಬಲಿಯಿಂದ ಪಾಲನ್ನು ಪಡೆಯುತ್ತಾರೆ. ಇದು ನಿಮಗೆ ತಿಳಿದಿದೆ.</verse>
				<verse number="14">ಅದೇ ಪ್ರಕಾರ ಶುಭಸಂದೇಶ ಪ್ರಚಾರಕರು ಶುಭಸಂದೇಶ ಪ್ರಚಾರದ ಆದಾಯದಿಂದಲೇ ಜೀವನ ನಡೆಸಬೇಕೆಂದು ಪ್ರಭುವೇ ಆಜ್ಞಾಪಿಸಿದ್ದಾರೆ.</verse>
				<verse number="15">ನಾನಂತೂ ಈ ಹಕ್ಕುಗಳಲ್ಲಿ ಒಂದನ್ನೂ ಚಲಾಯಿಸಲಿಲ್ಲ. ಚಲಾಯಿಸಬೇಕೆಂಬ ಉದ್ದೇಶದಿಂದಲೂ ಇದನ್ನು ಬರೆಯುತ್ತಿಲ್ಲ. ಅದಕ್ಕಿಂತಲೂ ಸಾಯುವುದೇ ಲೇಸು. ಈ ನನ್ನ ಹೆಮ್ಮೆಯನ್ನು ಯಾರೂ ಅಪಹರಿಸಲಾರರು.</verse>
				<verse number="16">ಶುಭಸಂದೇಶವನ್ನು ನಾನು ಸಾರುತ್ತಿದ್ದೇನೆಂದು ಕೊಚ್ಚಿಕೊಳ್ಳುವುದಕ್ಕೂ ನನಗೆ ಆಸ್ಪದವಿಲ್ಲ. ಏಕೆಂದರೆ, ಸಾರಲೇಬೇಕೆಂಬ ಕರ್ತವ್ಯಕ್ಕೆ ನಾನು ಬದ್ಧನಾಗಿದ್ದೇನೆ. ಸಾರದಿದ್ದರೆ ನನಗೆ ಧಿಕ್ಕಾರವಿರಲಿ!</verse>
				<verse number="17">ನಾನು ಸ್ವಂತ ಇಷ್ಟದಿಂದ ಈ ಕಾರ್ಯವನ್ನು ಕೈಗೊಂಡಿದ್ದರೆ ತಕ್ಕ ಸಂಭಾವನೆ ಇರುತ್ತಿತ್ತು. ಆದರೆ ಈ ಕರ್ತವ್ಯವನ್ನು ನನಗೆ ವಹಿಸಲಾಗಿದೆ. ಆದ್ದರಿಂದ ಕರ್ತವ್ಯಬದ್ಧನಾಗಿ ಮಾಡುತ್ತಿದ್ದೇನೆ.</verse>
				<verse number="18">ಹಾಗಾದರೆ ನನಗೆ ಸಿಗುವ ಸಂಭಾವನೆಯಾದರೂ ಏನು? ಶುಭಸಂದೇಶವನ್ನು ಸಾರುವಾಗ ಜೀವನೋಪಾಯಕ್ಕಾಗಿ ನನಗಿರುವ ಹಕ್ಕನ್ನು ಬಳಸಿಕೊಳ್ಳದೆ ಉಚಿತವಾಗಿ ಸಾರುವ ಸೌಭಾಗ್ಯವೇ ನನ್ನ ಸಂಭಾವನೆ.</verse>
				<verse number="19">ನಾನು ಸ್ವತಂತ್ರನು, ಯಾರಿಗೂ ದಾಸನಲ್ಲ. ಆದರೂ ಆದಷ್ಟು ಜನರನ್ನು ಗಳಿಸಿಕೊಳ್ಳಲೆಂದು ಎಲ್ಲರಿಗೂ ದಾಸನಾದೆ.</verse>
				<verse number="20">ಯೆಹೂದ್ಯರನ್ನು ಗಳಿಸಿಕೊಳ್ಳಲು ಯೆಹೂದ್ಯರಿಗೆ ಯೆಹೂದ್ಯನಂತಾದೆ. ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಗಳಿಸಿಕೊಳ್ಳಲು ನಾನು ಆ ಶಾಸ್ತ್ರಕ್ಕೆ ಅಧೀನನಲ್ಲದಿದ್ದರೂ ಅವರಿಗೋಸ್ಕರ ಅಧೀನನಂತಾದೆ.</verse>
				<verse number="21">ಧರ್ಮಶಾಸ್ತ್ರಕ್ಕೆ ಬಾಹಿರರಾದವರನ್ನು ಗಳಿಸಿಕೊಳ್ಳಲು ನಾನು ಧರ್ಮಶಾಸ್ತ್ರಕ್ಕೆ ಬಾಹಿರನಂತೆ ಆದೆ. ಯೇಸುಕ್ರಿಸ್ತರ ನಿಯಮಕ್ಕೆ ನಾನು ವಿಧೇಯನಾದುದರಿಂದ ದೇವರ ನಿಯಮಕ್ಕೆ ನಾನು ಬಾಹಿರನೇನೂ ಅಲ್ಲ.</verse>
				<verse number="22">ವಿಶ್ವಾಸದಲ್ಲಿ ದುರ್ಬಲರನ್ನು ಗಳಿಸಿಕೊಳ್ಳಲು ನಾನೂ ದುರ್ಬಲನಂತಾದೆ. ಹೇಗಾದರೂ ಸರಿ, ಕೆಲವರನ್ನಾದರೂ ಉದ್ಧರಿಸಲು ಎಲ್ಲರಿಗೂ ಎಲ್ಲವೂ ಆದೆ.</verse>
				<verse number="23">ಶುಭಸಂದೇಶದ ಸೌಭಾಗ್ಯದಲ್ಲಿ ಪಾಲುಗೊಳ್ಳಲೆಂದು ಇದೆಲ್ಲವನ್ನು ಶುಭಸಂದೇಶಕ್ಕಾಗಿಯೇ ಮಾಡುತ್ತೇನೆ,</verse>
				<verse number="24">ನಿಮಗೆ ತಿಳಿದಿರುವಂತೆ ಕ್ರೀಡಾಂಗಣದಲ್ಲಿ ಅನೇಕರು ಓಟದ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ. ಆದರೆ ಪ್ರಥಮ ಬಹುಮಾನ ದೊರಕುವುದು ಒಬ್ಬನಿಗೆ ಮಾತ್ರ. ಅಂತೆಯೇ ಬಹುಮಾನವನ್ನು ಪಡೆದುಕೊಳ್ಳಲು ನೀವೂ ಓಡಿ.</verse>
				<verse number="25">ಕ್ರೀಡಾಪಟುಗಳೆಲ್ಲರೂ ತಮ್ಮನ್ನು ಹತೋಟಿಯಲ್ಲಿಟ್ಟುಕೊಳ್ಳುತ್ತಾರೆ. ಅಳಿದುಹೋಗುವ ಪದಕದ ಗಳಿಕೆಗಾಗಿ ಪ್ರಯತ್ನಮಾಡುತ್ತಾರೆ. ನಾವಾದರೋ ಅಮರ ಪದಕದ ಗಳಿಕೆಗಾಗಿ ಶ್ರಮಿಸುತ್ತೇವೆ.</verse>
				<verse number="26">ನಾನಾದರೋ ಗೊತ್ತು ಗುರಿಯಿಲ್ಲದವನಂತೆ ಓಡುವುದಿಲ್ಲ, ಗಾಳಿಯೊಡನೆ ಗುದ್ದಾಡುವವನಂತೆ ಹೋರಾಡುವುದಿಲ್ಲ.</verse>
				<verse number="27">ಇತರರಿಗೆ ಕರೆಕೊಟ್ಟ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ, ನನ್ನನ್ನೇ ನಾನು ಹತೋಟಿಯಲ್ಲಿಟ್ಟುಕೊಳ್ಳುತ್ತೇನೆ.</verse>
			</chapter>
			<chapter number="10">
				<verse number="1">ಪ್ರಿಯ ಸಹೋದರರೇ, ನಮ್ಮ ಪೂರ್ವಜರಿಗೆ ಸಂಭವಿಸಿದವುಗಳತ್ತ ನಿಮ್ಮ ಗಮನವನ್ನು ಸೆಳೆಯಬೇಕೆಂದಿದ್ದೇನೆ. ಅವರೆಲ್ಲರೂ ಮೋಡದ ನೆರಳಿನಲ್ಲಿಯೇ ನಡೆದರು. ಎಲ್ಲರೂ ಸಮುದ್ರವನ್ನು ಸುರಕ್ಷಿತವಾಗಿ ದಾಟಿದರು.</verse>
				<verse number="2">ಹೀಗೆ ಅವರು ಮೋಡದಲ್ಲಿಯೂ ಸಮುದ್ರದಲ್ಲಿಯೂ ಸ್ನಾನದೀಕ್ಷೆಯನ್ನು ಪಡೆದು ಮೋಶೆಗೆ ಶಿಷ್ಯರಾದರು.</verse>
				<verse number="3">ಎಲ್ಲರೂ ಒಂದೇ ದೈವಿಕ ಪಾನೀಯವನ್ನು ಕುಡಿದರು;</verse>
				<verse number="4">ಅದೂ ತಮ್ಮೊಡನೆ ಬರುತ್ತಿದ್ದ ದೈವಿಕ ಬಂಡೆಯಿಂದ ಕುಡಿದರು. ಕ್ರಿಸ್ತಯೇಸುವೇ ಆ ಬಂಡೆ.</verse>
				<verse number="5">ಆದರೂ ಅವರಲ್ಲಿ ಬಹುಮಂದಿ ದೇವರ ಮೆಚ್ಚುಗೆಗೆ ಪಾತ್ರರಾಗಲಿಲ್ಲ. ಆದ್ದರಿಂದಲೇ ಮರುಭೂಮಿಯಲ್ಲೆ ಮಡಿದು ಮಣ್ಣುಪಾಲಾದರು.</verse>
				<verse number="6">ಈ ಘಟನೆಗಳು ನಮಗೆ ಎಚ್ಚರಿಕೆ ನೀಡುವ ನಿದರ್ಶನಗಳಾಗಿವೆ. ಅವರಂತೆ ನಾವು ಕೆಟ್ಟದಾದವುಗಳನ್ನು ಆಶಿಸಬಾರದು.</verse>
				<verse number="7">ಅವರಲ್ಲಿ ಕೆಲವರು ವಿಗ್ರಹಾರಾಧಕರಾದಂತೆ ನಾವು ಆಗಬಾರದು. ಇವರನ್ನು ಕುರಿತೇ: “ತಿನ್ನಲೆಂದು ಕುಡಿಯಲೆಂದು ಕುಳಿತರು ಕುಣಿಯಲೆಂದು ಕಾಮವೆದ್ದು ನಿಂತರು ಈ ಜನರು” - ಎಂದು ಬರೆದಿದೆ.</verse>
				<verse number="8">ಅವರಲ್ಲಿ ಕೆಲವರು ಹಾದರಮಾಡಿದ್ದರಿಂದ ಒಂದೇ ದಿನದಲ್ಲಿ ಇಪ್ಪತ್ತಮೂರು ಸಾವಿರಮಂದಿ ಸತ್ತರು. ನಾವು ಹಾದರದಿಂದ ದೂರವಿರಬೇಕು.</verse>
				<verse number="9">ಅವರ ಪೈಕಿ ಕೆಲವರು ಪ್ರಭುವನ್ನು ಶೋಧಿಸಿದರು. ಪರಿಣಾಮವಾಗಿ ಸರ್ಪಗಳಿಂದ ನಾಶವಾದರು. ಅವರಂತೆ ಪ್ರಭುವನ್ನು ಶೋಧನೆಮಾಡುವುದು ನಮಗೆ ಬೇಡ.</verse>
				<verse number="10">ಮತ್ತೆ ಕೆಲವರು ಗೊಣಗುಟ್ಟಿದರು; ಸಂಹಾರಕ ದೂತನಿಂದ ಸಂಹರಿಸಲ್ಪಟ್ಟರು. ನೀವೂ ಅವರಂತೆ ಗೊಣಗುಟ್ಟುವವರಾಗಬೇಡಿ.</verse>
				<verse number="11">ಇದೆಲ್ಲ ಅವರಿಗೆ ಸಂಭವಿಸಿದುದು ಇತರರಿಗೆ ನಿದರ್ಶನವಾಗಿರಲೆಂದು. ಇವುಗಳನ್ನು ಬರೆದಿಟ್ಟಿರುವುದು, ಯುಗಾಂತ್ಯಕ್ಕೆ ಬಂದಿರುವ ನಮಗೆ ಮುನ್ನೆಚ್ಚರಿಕೆಯಾಗಿರಲೆಂದು.</verse>
				<verse number="12">ಆದಕಾರಣ ಸ್ಥಿರವಾಗಿ ನಿಂತಿರುವೆನೆಂದು ಕೊಚ್ಚಿಕೊಳ್ಳುವವನೇ, ಕುಸಿದುಬೀಳದಂತೆ ಎಚ್ಚರಿಕೆಯಿಂದಿರು.</verse>
				<verse number="13">ಮಾನವರಿಂದ ಜಯಿಸಲಾಗದ ಶೋಧನೆಗಳೇನೂ ನಿಮಗೆ ಬಂದಿಲ್ಲ. ದೇವರು ಕೊಟ್ಟಮಾತಿಗೆ ತಪ್ಪಲಾರರು. ಗೆಲ್ಲಲಾಗದ ಶೋಧನೆಗಳಿಗೆ ನಿಮ್ಮನ್ನೆಂದೂ ಗುರಿಪಡಿಸಲಾರರು. ಶೋಧನೆಗಳು ಬಂದಾಗ ಅವುಗಳನ್ನು ಸಹಿಸಿಕೊಳ್ಳುವ ಶಕ್ತಿಯನ್ನೂ ತಪ್ಪಿಸಿಕೊಳ್ಳುವ ಮಾರ್ಗವನ್ನೂ ಅವರೇ ಒದಗಿಸುತ್ತಾರೆ.</verse>
				<verse number="14">ಆದ್ದರಿಂದ ಪ್ರಿಯರೇ, ವಿಗ್ರಹಾರಾಧನೆಯನ್ನು ತೊರೆದುಬಿಡಿ.</verse>
				<verse number="15">ನೀವು ಅರಿತವರೆಂದು ತಿಳಿದೇ ಇದನ್ನು ಹೇಳುತ್ತಿದ್ಧೇನೆ. ನನ್ನ ಮಾತುಗಳನ್ನು ನೀವೇ ಪರಿಶೀಲಿಸಿನೋಡಿ.</verse>
				<verse number="16">ನಾವು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ ಪಾನಪಾತ್ರೆಯಿಂದ ಕುಡಿಯುವಾಗ ಕ್ರಿಸ್ತಯೇಸುವಿನ ರಕ್ತದಲ್ಲಿ ಪಾಲುಗೊಳ್ಳುತ್ತೇವಲ್ಲವೇ? ರೊಟ್ಟಿಯನ್ನು ಮುರಿದು ತಿನ್ನುವಾಗ ಕ್ರಿಸ್ತಯೇಸುವಿನ ಶರೀರದಲ್ಲಿ ಪಾಲುಗೊಳ್ಳುತ್ತೇವಲ್ಲವೇ?</verse>
				<verse number="17">ರೊಟ್ಟಿ ಒಂದೇ; ಆದ್ದರಿಂದ ನಾವು ಅನೇಕರಿದ್ದರೂ ಒಂದೇ ಶರೀರವಾಗುತ್ತೇವೆ. ಏಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಭಾಗಿಗಳಾಗುತ್ತೇವೆ.</verse>
				<verse number="18">ಇಸ್ರಯೇಲರ ಪದ್ಧತಿಯನ್ನು ಗಮನಿಸಿರಿ: ಬಲಿಯಾಗಿ ಅರ್ಪಿತವಾದುದನ್ನು ಭುಜಿಸುವವರು ಬಲಿಪೀಠದ ಸೇವೆಯಲ್ಲಿ ಭಾಗಿಯಾಗುತ್ತಾರಷ್ಟೆ.</verse>
				<verse number="19">ಹೀಗೆ ನಾನು ಹೇಳುವಾಗ ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥವು ವಾಸ್ತವವಾದುದು ಅಥವಾ ವಿಗ್ರಹವೇ ವಾಸ್ತವವಾದುದು ಎಂದು ಅರ್ಥವೇ?</verse>
				<verse number="20">ಯಾವುದೂ ಅಲ್ಲ. ನಾನು ಹೇಳುವುದೇನೆಂದರೆ: ಅನ್ಯಜನರು ಬಲಿಯನ್ನು ದೆವ್ವಗಳಿಗೆ ಅರ್ಪಿಸುತ್ತಾರೆ ಹೊರತು ದೇವರಿಗಲ್ಲ. ಹೀಗೆ ನೀವು ದೆವ್ವಗಳೊಂದಿಗೆ ಭಾಗಿಯಾಗುವುದನ್ನು ನಾನೆಂದಿಗೂ ಇಷ್ಟಪಡುವುದಿಲ್ಲ.</verse>
				<verse number="21">ನೀವು ಪ್ರಭುವಿನ ಪಾತ್ರೆಯಿಂದ ಹಾಗೂ ದೆವ್ವಗಳ ಪಾತ್ರೆಯಿಂದ ಕುಡಿಯಲಾಗದು. ಪ್ರಭುವಿನ ಪಂಕ್ತಿಯಲ್ಲೂ ಅಂತೆಯೇ ದೆವ್ವಗಳ ಪಂಕ್ತಿಯಲ್ಲೂ ಊಟಮಾಡಲಾಗದು.</verse>
				<verse number="22">ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?</verse>
				<verse number="23">“ಏನನ್ನು ಮಾಡಲೂ ಸ್ವಾತಂತ್ರ್ಯವಿದೆ,” ಎಂದು ಹೇಳುವುದುಂಟು. ಆದರೆ ಎಲ್ಲವೂ ಪ್ರಯೋಜನಕರವಲ್ಲ. ಏನನ್ನು ಮಾಡಲೂ ಸ್ವಾತಂತ್ರ್ಯವಿದೆ. ಆದರೆ ಎಲ್ಲವೂ ಅಭಿವೃದ್ಧಿಕರವಲ್ಲ.</verse>
				<verse number="24">ಪ್ರತಿಯೊಬ್ಬನೂ ತನ್ನ ಹಿತವನ್ನು ಮಾತ್ರ ಬಯಸದೆ ಪರರ ಹಿತವನ್ನೂ ಬಯಸಬೇಕು.</verse>
				<verse number="25">ಮನಸ್ಸಾಕ್ಷಿಯನ್ನು ಕೆದಕುವ ಪ್ರಶ್ನೆಗಳಿಗೆ ಎಡೆಕೊಡದೆ ಮಾಂಸದ ಮಾರುಕಟ್ಟೆಯಲ್ಲಿ ಮಾರುವುದೆಲ್ಲವನ್ನೂ ನೀವು ತಂದು ತಿನ್ನಬಹುದು.</verse>
				<verse number="26">ಏಕೆಂದರೆ, “ಭೂಮಂಡಲವೂ ಅದರಲ್ಲಿರುವುದೆಲ್ಲವೂ ಪ್ರಭುವಿನದೆ.”</verse>
				<verse number="27">ಕ್ರೈಸ್ತವಿಶ್ವಾಸಿ ಅಲ್ಲದವನು, ನಿಮ್ಮನ್ನು ಊಟಕ್ಕೆ ಕರೆದಾಗ, ನಿಮಗಿಷ್ಟವಿದ್ದರೆ ಹೋಗಿರಿ; ಮನಸ್ಸಾಕ್ಷಿಯನ್ನು ಕೆದಕುವ ಪ್ರಶ್ನೆಗಳಿಗೆ ಎಡೆಕೊಡದೆ ಅವನು ಬಡಿಸಿದ್ದನ್ನು ಊಟಮಾಡಿರಿ.</verse>
				<verse number="28">ಆಗ ಯಾರಾದರೂ, “ಇದು ವಿಗ್ರಹಗಳಿಗೆ ಬಲಿಕೊಟ್ಟದ್ದು,” ಎಂದು ಹೇಳಿದರೆ, ಹಾಗೆ ತಿಳಿಸಿದವನ ಸಲುವಾಗಿ ಹಾಗೂ ಮನಸ್ಸಾಕ್ಷಿಯ ಸಲುವಾಗಿ ಅದನ್ನು ಊಟಮಾಡಬೇಡಿ.</verse>
				<verse number="29">ಅಂದರೆ, ನಿನ್ನ ಸ್ವಂತ ಮನಸ್ಸಾಕ್ಷಿಯ ಸಲುವಾಗಿ ಅಲ್ಲ, ನಿನಗೆ ತಿಳಿಸಿದವನ ಮನಸ್ಸಾಕ್ಷಿಯ ಸಲುವಾಗಿ ಊಟಮಾಡಬೇಡ. ನಿಮ್ಮಲ್ಲಿ ಒಬ್ಬನು, “ನನ್ನ ಸ್ಯಾತಂತ್ರ್ಯಕ್ಕೆ ಇನ್ನೊಬ್ಬನ ಮನಸ್ಸಾಕ್ಷಿ ಏಕೆ ಅಡ್ಡಿಯಾಗಬೇಕು?” ಎಂದು ಕೇಳಬಹುದು.</verse>
				<verse number="30">ಹಾಗೂ “ನಾನು ದೇವರಿಗೆ ಕೃತಜ್ಞತಾಸ್ತೋತ್ರ ಮಾಡಿ ಊಟಮಾಡಿದೆನಾದರೆ ಹಗೆ ಸ್ತೋತ್ರಸಲ್ಲಿಕೆಯೊಂದಿಗೆ ಮಾಡಿದ ಊಟಕ್ಕಾಗಿ ನನ್ನ ಮೇಲೆ ದೂಷಣೆ ಏಕೆ?” ಎಂದು ಕೇಳಬಹುದು.</verse>
				<verse number="31">ಅದಕ್ಕೆ ನನ್ನ ಉತ್ತರ ಇದು: ನೀವು ಉಂಡರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿ.</verse>
				<verse number="32">ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ, ದೇವರ ಧರ್ಮಸಭೆಗಾಗಲಿ ಬಾಧಕರಾಗಿರಬೇಡಿ.</verse>
				<verse number="33">ನಾನಂತೂ ನನ್ನ ಸ್ವಂತ ಹಿತವನ್ನು ಲೆಕ್ಕಿಸದೆ ಸರ್ವರ ಉದ್ಧಾರಕ್ಕಾಗಿ ಅವರ ಹಿತವನ್ನು ಅಪೇಕ್ಷಿಸಿ, ಎಲ್ಲರನ್ನೂ ಎಲ್ಲದರಲ್ಲೂ ಮೆಚ್ಚಿಸಲು ಪ್ರಯತ್ನಿಸುತ್ತೇನೆ.</verse>
			</chapter>
			<chapter number="11">
				<verse number="1">ನಾನು ಕ್ರಿಸ್ತಯೇಸುವನ್ನು ಅನುಸರಿಸುವಂತೆ, ನೀವೂ ನನ್ನನ್ನೂ ಅನುಸರಿಸಿರಿ.</verse>
				<verse number="2">ನೀವು ಸದಾ ನನ್ನನ್ನು ಸ್ಮರಿಸಿಕೊಂಡು ನಾನು ನಿಮಗೆ ತಿಳಿಸಿಕೊಟ್ಟ ಸಾಂಪ್ರದಾಯಿಕ ರೀತಿನೀತಿಗಳನ್ನು ಸರಿಯಾಗಿ ಪಾಲಿಸಿಕೊಂಡು ಬರುತ್ತಿದ್ದೀರಿ; ಇದಕ್ಕಾಗಿ ನಿಮ್ಮನ್ನು ಮೆಚ್ಚುತ್ತೇನೆ.</verse>
				<verse number="3">ಒಂದು ವಿಷಯ ನಿಮಗೆ ತಿಳಿದಿರಲಿ. ಪ್ರತಿಯೊಬ್ಬ ವ್ಯಕ್ತಿಗೂ ಕ್ರಿಸ್ತಯೇಸುವೇ ಶಿರಸ್ಸು. ಪ್ರತಿಯೊಬ್ಬ ಸ್ತ್ರೀಗೂ ಪುರುಷನೇ ಶಿರಸ್ಸು. ಕ್ರಿಸ್ತೇಸುವಿಗೆ ದೇವರೇ ಶಿರಸ್ಸು.</verse>
				<verse number="4">ಪುರುಷನು ತಲೆಯ ಮೇಲೆ ಮುಸುಕು ಹಾಕಿಕೊಂಡು ಪ್ರಾರ್ಥಿಸುವುದಾದರೆ ಅಥವಾ ದೇವರ ವಾಕ್ಯವನ್ನು ಪ್ರವಚಿಸುವುದಾದರೆ ತನ್ನ ಶಿರಸ್ಸಾದ ಕ್ರಿಸ್ತಯೇಸುವಿಗೆ ಅವಮಾನ ತರುತ್ತಾನೆ.</verse>
				<verse number="5">ಸ್ತ್ರೀಯು ತಲೆಯ ಮೇಲೆ ಮುಸುಕು ಹಾಕದೆ ಪ್ರಾರ್ಥಿಸುವುದಾದರೆ ಅಥವಾ ದೇವರ ವಾಕ್ಯವನ್ನು ಪ್ರವಚಿಸುವುದಾದರೆ ತನ್ನ ಶಿರಸ್ಸಾದ ಪತಿಗೆ ಅವಮಾನ ತರುತ್ತಾಳೆ. ಮುಸುಕು ಹಾಕದ ಸ್ತ್ರೀ ತಲೆಯನ್ನು ಮುಂಡನ ಮಾಡಿಸಿಕೊಂಡಂತೆಯೇ.</verse>
				<verse number="6">ಹಾಗೆ ಮುಸುಕು ಹಾಕದ ಸ್ತ್ರೀ ತನ್ನ ತಲೆಗೂದಲನ್ನು ತೆಗೆದುಬಿಡಲಿ. ಸ್ತ್ರೀಗೆ ತಲೆಗೂದಲನ್ನು ಕತ್ತರಿಸುವುದಾಗಲಿ, ಬೋಳಿಸುವುದಾಗಲಿ ಲಜ್ಜಾಸ್ಪದವಾಗಿದ್ದರೆ, ಆಕೆ ತಲೆಗೆ ಮುಸುಕು ಹಾಕಿಕೊಳ್ಳಲಿ.</verse>
				<verse number="7">ಪುರುಷನು ತಲೆಯ ಮೇಲೆ ಮುಸುಕುಹಾಕಬೇಕಾಗಿಲ್ಲ. ಏಕೆಂದರೆ, ಅವನು ದೇವರ ರೂಪ ಹಾಗೂ ಅವರ ಮಹಿಮೆಯ ಪ್ರತಿಬಿಂಬ. ಸ್ತ್ರೀಯಾದರೋ, ಪುರುಷನ ಮಹಿಮೆಯ ಪ್ರತಿಬಿಂಬ.</verse>
				<verse number="8">ಸ್ತ್ರೀಯಿಂದ ಪುರುಷನಲ್ಲ; ಪುರುಷನಿಂದ ಸ್ತ್ರೀ ಉತ್ಪತ್ತಿ ಆದಳು.</verse>
				<verse number="9">ಅಂತೆಯೇ ಸ್ತ್ರೀಗಾಗಿ ಪುರುಷನಲ್ಲ; ಪುರುಷನಿಗಾಗಿ ಸ್ತ್ರೀ ಸೃಷ್ಟಿಯಾದಳು.</verse>
				<verse number="10">ಹೀಗೆ ದೇವದೂತರ ಸಲುವಾಗಿಯಾದರೂ ಸ್ತ್ರೀಯು ಗೌರವ ಸೂಚಿಸಲು ಮುಸುಕನ್ನು ಹಾಕಬೇಕು.</verse>
				<verse number="11">ಆದರೂ ಪ್ರಭುವಿನ ಮಟ್ಟಿಗೆ ಪುರುಷನಿಲ್ಲದೆ ಸ್ತ್ರೀಯು ಇಲ್ಲ; ಸ್ತ್ರೀ ಇಲ್ಲದೆ ಪುರುಷನೂ ಇಲ್ಲ.</verse>
				<verse number="12">ಏಕೆಂದರೆ ಸ್ತ್ರೀ ಪುರುಷನಿಂದ ಉತ್ಪತ್ತಿಯಾದಂತೆ ಪುರುಷನು ಸ್ತ್ರೀಯಿಂದ ಜನಿಸುತ್ತಾನೆ. ಸಮಸ್ತವೂ ದೇವರಿಂದ ಹುಟ್ಟುತ್ತದೆ.</verse>
				<verse number="13">ಸ್ತ್ರೀ ಮುಸುಕಿಲ್ಲದೆ ದೇವರನ್ನು ಪ್ರಾರ್ಥಿಸುವುದು ಲಕ್ಷಣವೇ? ನೀವೇ ತೀರ್ಮಾನಿಸಿರಿ.</verse>
				<verse number="14">ಉದ್ದ ಕೂದಲು ಪುರುಷನಿಗೆ ಲಜ್ಜಾಸ್ಪದವೆಂಬುದೂ ನೀಳಕೂದಲು ಸ್ತ್ರೀಗೆ ಭೂಷಣವೆಂಬುದೂ ಸ್ವಭಾವಸಿದ್ಧವಲ್ಲವೇ? ಕೇಶರಾಶಿ ಸ್ತ್ರೀಗೆ ರಕ್ಷಾವರಣವಲ್ಲವೇ?</verse>
				<verse number="15"></verse>
				<verse number="16">ಇದರ ಬಗ್ಗೆ ಯಾರಾದರೂ ತರ್ಕಿಸಿದರೆ ಅಂಥವನಿಗೆ ಇದು ತಿಳಿದಿರಲಿ: ಇಂಥ ಪದ್ಧತಿ ನಮ್ಮಲ್ಲಿ ಇಲ್ಲ: ಇನ್ನಾವ ಧರ್ಮಸಭೆಗಳಲ್ಲೂ ಇಲ್ಲ.</verse>
				<verse number="17">ಈಗ ನಾನು ಹೇಳಲಿರುವ ವಿಷಯದಲ್ಲಿ ನಿಮ್ಮನ್ನು ಮೆಚ್ಚಲಾರೆ. ನೀವು ಸಭೆ ಸೇರುವುದು ಒಳಿತಿಗಿಂತಲೂ ಹೆಚ್ಚಾಗಿ ಕೇಡನ್ನೆ ಉಂಟುಮಾಡುತ್ತಿದೆ.</verse>
				<verse number="18">ಮೊದಲನೆಯದಾಗಿ, ನೀವು ಸೇರುವ ಸಭೆಯಲ್ಲಿ ಪಂಗಡಗಳಿವೆಯಂತೆ. ಸ್ವಲ್ಪಮಟ್ಟಿಗಾದರೂ ಈ ಸಮಾಚಾರ ನಿಜವೆಂದು ನನಗನ್ನಿಸುತ್ತದೆ.</verse>
				<verse number="19">ನಿಮ್ಮಲ್ಲಿ ಭಿನ್ನಾಭಿಪ್ರಾಯಗಳು ಇರುವುದು ಸಹಜ. ಹಾಗಿರುವಾಗಲೇ ಪ್ರಾಮಾಣಿಕರು ಯಾರೆಂದು ಕಂಡುಕೊಳ್ಳಲು ಸಾಧ್ಯ.</verse>
				<verse number="20">ಆದರೂ ನೀವೆಲ್ಲಾ ಒಂದಾಗಿ ಸೇರುವಾಗ ನೀವು ಮಾಡುವ ಭೋಜನ ಪ್ರಭುವಿನ ಭೋಜನವಲ್ಲ.</verse>
				<verse number="21">ಏಕೆಂದರೆ, ಭೋಜನ ಸಮಯದಲ್ಲಿ ಒಬ್ಬೊಬ್ಬನೂ ತಾನು ತಂದದ್ದನ್ನು ತಿನ್ನಲು ಇತರರಿಗಿಂತ ಮುಂಚಿತವಾಗಿಯೇ ಕುಳಿತುಕೊಳ್ಳುತ್ತಾನೆ. ಒಬ್ಬನು ಹಸಿದಿರುತ್ತಾನೆ; ಇನ್ನೊಬ್ಬನು ಕುಡಿದು ಮತ್ತನಾಗುತ್ತಾನೆ.</verse>
				<verse number="22">ತಿನ್ನಲು, ಕುಡಿಯಲು ನಿಮಗೆ ಸ್ವಂತ ಮನೆಗಳಿಲ್ಲವೇ? ನಿರ್ಗತಿಕರನ್ನು ನಾಚಿಕೆಗೀಡುಮಾಡಿ, ದೇವರ ಸಭೆಯನ್ನು ಉಪೇಕ್ಷಿಸಬೇಕೆಂದಿರುವಿರೋ? ಇದರ ಬಗ್ಗೆ ನಿಮಗೆ ನಾನು ಏನು ಹೇಳಲೀ? ನಿಮ್ಮನ್ನು ಹೊಗಳುವುದೋ, ತೆಗಳುವುದೋ? ಖಂಡಿತವಾಗಿ ನಿಮ್ಮನ್ನು ಹೊಗಳಲಾರೆ.</verse>
				<verse number="23">ನಿಮಗೆ ಮಾಡಿದ ಉಪದೇಶವನ್ನು ನಾನು ಪ್ರಭುವಿನಿಂದಲೇ ಪಡೆದೆನು. ಅದೇನೆಂದರೆ: ಪ್ರಭುಯೇಸು, ತಮ್ಮನ್ನು ಹಿಡಿದುಕೊಡಲಾದ ಆ ರಾತ್ರಿ, ರೊಟ್ಟಿಯನ್ನು ತೆಗೆದುಕೊಂಡು</verse>
				<verse number="24">ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ ಅದನ್ನು ಮುರಿದು, “ಇದು ನಿಮಗಾಗಿ ಒಪ್ಪಿಸಲಾಗುವ ನನ್ನ ಶರೀರ, ಇದನ್ನು ನನ್ನ ಸ್ಮರಣೆಗಾಗಿ ಮಾಡಿ,” ಎಂದರು.</verse>
				<verse number="25">ಅಂತೆಯೇ ಭೋಜನದ ಕೊನೆಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ; ಇದನ್ನು ನೀವು ಪಾನಮಾಡುವಾಗಲೆಲ್ಲಾ ನನ್ನ ಸ್ಮರಣೆಗಾಗಿ ಮಾಡಿರಿ,” ಎಂದರು.</verse>
				<verse number="26">ಎಂದೇ, ನೀವು ಈ ರೊಟ್ಟಿಯನ್ನು ಭುಜಿಸಿ ಈ ಪಾತ್ರೆಯಿಂದ ಪಾನಮಾಡುವಾಗಲೆಲ್ಲಾ ಪ್ರಭು ಬರುವ ತನಕ ಅವರ ಮರಣವನ್ನು ಸಾರುತ್ತೀರಿ.</verse>
				<verse number="27">ಯಾರಾದರೂ ಅಯೋಗ್ಯವಾಗಿ ಈ ರೊಟ್ಟಿಯನ್ನು ಭುಜಿಸಿದರೆ, ಅಥವಾ ಪ್ರಭುವಿನ ಪಾತ್ರೆಯಿಂದ ಪಾನಮಾಡಿದರೆ ಅವನು ಪ್ರಭುವಿನ ಶರೀರಕ್ಕೂ ರಕ್ತಕ್ಕೂ ದ್ರೋಹವೆಸಗುತ್ತಾನೆ.</verse>
				<verse number="28">ಪ್ರತಿಯೊಬ್ಬನೂ ಮೊಟ್ಟಮೊದಲು ತನ್ನನ್ನು ಪರಿಶೋಧಿಸಿಕೊಂಡು ಅನಂತರ ಆ ರೊಟ್ಟಿಯನ್ನು ಭುಜಿಸಲಿ; ಮತ್ತು ಆ ಪಾತ್ರೆಯಿಂದ ಪಾನಮಾಡಲಿ.</verse>
				<verse number="29">ಏಕೆಂದರೆ, ಅದು ಪ್ರಭುವಿನ ಶರೀರವೆಂದು ಪರಿಗ್ರಹಿಸದೆ, ಭುಜಿಸಿ ಪಾನಮಾಡುವಾತನು ನ್ಯಾಯತೀರ್ಪನ್ನು ತನ್ನ ಮೇಲೆ ಬರಮಾಡಿಕೊಳ್ಳುವುದಕ್ಕಾಗಿಯೇ ತಿನ್ನುತ್ತಾನೆ, ಕುಡಿಯುತ್ತಾನೆ.</verse>
				<verse number="30">ನಿಮ್ಮಲ್ಲಿ ಅನೇಕರು ಈ ಕಾರಣದಿಂದಲೇ ದುರ್ಬಲರು, ಅಸ್ವಸ್ಥರು ಆಗಿದ್ದೀರಿ; ಮತ್ತು ಎಷ್ಟೋಮಂದಿ ಸತ್ತಿದ್ದಾರೆ.</verse>
				<verse number="31">ನಮ್ಮನ್ನು ನಾವೇ ಪರಿಶೋಧಿಸಿಕೊಂಡರೆ ನಾವು ನ್ಯಾಯತೀರ್ಪಿಗೆ ಒಳಗಾಗುವುದಿಲ್ಲ.</verse>
				<verse number="32">ಹಾಗೇನಾದರೂ ಪ್ರಭುವಿನ ವಿಚಾರಣೆಗೆ ನಾವು ಒಳಪಟ್ಟರೆ ಅವರು ನಮ್ಮನ್ನು ದಂಡಿಸಿ ತಿದ್ದುತ್ತಾರೆ. ಪ್ರಪಂಚದೊಂದಿಗೆ ನಾವು ತಪ್ಪಿತಸ್ಥರಾಗದಂತೆ ಮಾಡುತ್ತಾರೆ.</verse>
				<verse number="33">ಆದ್ದರಿಂದ ಪ್ರಿಯ ಸಹೋದರರೇ, ಪ್ರಭುವಿನ ಭೋಜನಕ್ಕಾಗಿ ನೀವು ಒಂದಾಗಿ ಸೇರುವಾಗ ಒಬ್ಬರಿಗೊಬ್ಬರು ಕಾದುಕೊಂಡಿರಿ.</verse>
				<verse number="34">ನೀವು ಹಸಿವು ನೀಗಿಸಿಕೊಳ್ಳುವುದಕ್ಕಾಗಿ ಸಭೆಗೆ ಬರುವುದಾದರೆ ಮನೆಯಲ್ಲೇ ಊಟಮಾಡಿ. ಆಗ ಸಭೆಸೇರಿ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ. ಇನ್ನುಳಿದ ವಿಷಯಗಳನ್ನು ನಾನು ಬಂದು ಇತ್ಯರ್ಥ ಮಾಡುತ್ತೇನೆ.</verse>
			</chapter>
			<chapter number="12">
				<verse number="1">ಸಹೋದರರೇ, ಪವಿತ್ರಾತ್ಮ ಅವರ ವರದಾನಗಳ ಬಗ್ಗೆ ನೀವು ಸರಿಯಾದ ಅರಿವುಳ್ಳವರಾಗಿರಬೇಕು.</verse>
				<verse number="2">ನೀವು ಅನ್ಯಮತಸ್ಥರಾಗಿದ್ದಾಗ, ನಿಮಗೆ ಮನಸ್ಸು ಬಂದಂತೆಲ್ಲಾ ಮೂಕ ವಿಗ್ರಹಗಳ ಬಳಿ ಹೋಗಿ ಬರುತ್ತಿದ್ದಿರಿ; ಇದನ್ನು ನೀವೇ ಬಲ್ಲಿರಿ.</verse>
				<verse number="3">ಇಷ್ಟುಮಾತ್ರ ನಿಮಗೆ ಸ್ಪಷ್ಟವಾಗಿ ತಿಳಿದಿರಲಿ; ಪವಿತ್ರಾತ್ಮ ಪ್ರೇರಣೆಯಿಂದ ಮಾತನಾಡುವ ಯಾವಾತನೂ, “ಯೇಸುವಿಗೆ ಧಿಕ್ಕಾರ!” ಎನ್ನಲಾರನು. ಅಂತೆಯೇ, ಪವಿತ್ರಾತ್ಮ ಪ್ರೇರಣೆಯಿಂದಲ್ಲದೆ ಯಾವಾತನೂ, “ಯೇಸುವೇ ಪ್ರಭು,” ಎಂದು ಒಪ್ಪಿಕೊಳ್ಳಲಾರನು.</verse>
				<verse number="4">ವರದಾನಗಳು ವಿಧವಿಧವಾಗಿವೆ; ಅವುಗಳನ್ನು ಕೊಡುವ ಪವಿತ್ರಾತ್ಮ ಒಬ್ಬರೇ.</verse>
				<verse number="5">ಸೇವೆಗಳು ವಿಧವಿಧವಾಗಿವೆ; ಅವುಗಳನ್ನು ಸ್ವೀಕರಿಸುವ ಪ್ರಭುವು ಒಬ್ಬರೇ.</verse>
				<verse number="6">ಶಕ್ತಿಸಾಮರ್ಥ್ಯವು ನಾನಾ ವಿಧ; ಅವುಗಳನ್ನು ಎಲ್ಲರಲ್ಲೂ ಸಾಧಿಸುವ ದೇವರು ಒಬ್ಬರೇ.</verse>
				<verse number="7">ಪ್ರತಿಯೊಬ್ಬನಲ್ಲಿ ಕಂಡುಬರುವ ಪವಿತ್ರಾತ್ಮರ ವರದಾನಗಳನ್ನು ಸರ್ವರ ಒಳಿತಿಗಾಗಿಯೇ ಕೊಡಲಾಗಿದೆ.</verse>
				<verse number="8">ಪವಿತ್ರಾತ್ಮ ಮುಖಾಂತರ ಒಬ್ಬನಿಗೆ ಜ್ಞಾನೋಕ್ತಿಗಳು, ಇನ್ನೊಬ್ಬನಿಗೆ ಅವರ ಮುಖಾಂತರವೇ ವಿದ್ಯೋಕ್ತಿಗಳು ಲಭಿಸುತ್ತವೆ;</verse>
				<verse number="9">ಅದೇ ಪವಿತ್ರಾತ್ಮರಿಂದ ಒಬ್ಬನಿಗೆ ಅಗಾಧ ವಿಶ್ವಾಸವೂ ಇನ್ನೊಬ್ಬನಿಗೆ ಸ್ವಸ್ಥತೆಯನ್ನೀಯುವ ಶಕ್ತಿಯೂ ದೊರಕುತ್ತವೆ.</verse>
				<verse number="10">ಒಬ್ಬನಿಗೆ ಪವಾಡಗಳನ್ನು ಎಸಗುವ ಪರಾಕ್ರಮವನ್ನು, ಇನ್ನೊಬ್ಬನಿಗೆ ಪ್ರವಾದನೆಮಾಡುವ ಪ್ರತಿಭೆಯನ್ನು, ಮತ್ತೊಬ್ಬನಿಗೆ ಸತ್ಯಾಸತ್ಯವನ್ನು ವಿವೇಚಿಸುವ ಜಾಣ್ಮೆಯನ್ನು, ಮಗದೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಸಾಮರ್ಥ್ಯವನ್ನು, ಮತ್ತೂ ಒಬ್ಬನಿಗೆ ಅವುಗಳನ್ನು ಅರ್ಥೈಸುವ ಅರಿವನ್ನು ಆ ಪವಿತ್ರಾತ್ಮರಿಂದಲೇ ಕೊಡಲಾಗುತ್ತದೆ.</verse>
				<verse number="11">ಈ ವರಗಳನ್ನೆಲ್ಲ ಆ ಪವಿತ್ರಾತ್ಮ ಒಬ್ಬರೇ ತಮ್ಮ ಇಷ್ಟಾನುಸಾರ ಪ್ರತಿಯೊಬ್ಬನಿಗೂ ಹಂಚುತ್ತಾರೆ.</verse>
				<verse number="12">ದೇಹ ಒಂದೇ; ಅಂಗಗಳು ಹಲವು. ಆ ಅಂಗಗಳು ಅನೇಕವಿದ್ದರೂ ಅವು ಸೇರಿ ಒಂದೇ ದೇಹವಾಗುತ್ತದೆ. ಅಂತೆಯೇ ಕ್ರಿಸ್ತಯೇಸು.</verse>
				<verse number="13">ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ಪರತಂತ್ರರಾಗಿರಲಿ, ಸ್ವತಂತ್ರರಾಗಿರಲಿ-ನಾವೆಲ್ಲರೂ ಒಂದೇ ದೇಹವಾಗುವಂತೆ ಒಂದೇ ಆತ್ಮದಿಂದ ದೀಕ್ಷಾಸ್ನಾನ ಹೊಂದಿದ್ದೇವೆ. ಒಂದೇ ಆತ್ಮವನ್ನು ನಮ್ಮೆಲ್ಲರಿಗೂ ಪಾನವಾಗಿ ಕೊಡಲಾಗಿದೆ.</verse>
				<verse number="14">ದೇಹವು ಏಕ ಅಂಗದಿಂದ ಅಲ್ಲ, ಅನೇಕ ಅಂಗಗಳಿಂದ ಕೂಡಿದೆ.</verse>
				<verse number="15">ಎಂದಾದರೂ ಕಾಲು, “ನಾನು ಕೈ ಅಲ್ಲ, ಈ ಕಾರಣ ನಾನು ದೇಹಕ್ಕೆ ಸೇರಿಲ್ಲ,” ಎಂದು ಹೇಳಿದ್ದಾದರೆ ಅದು ದೇಹದ ಅಂಗವಾಗಿರುವುದು ತಪ್ಪೀತೆ?</verse>
				<verse number="16">ಅಥವಾ ಕಿವಿ, “ನಾನು ಕಣ್ಣಲ್ಲ, ಈ ಕಾರಣ ನಾನು ದೇಹಕ್ಕೆ ಸೇರಿಲ್ಲ,” ಎಂದು ಹೇಳಿದ್ದಾದರೆ ಅದು ದೇಹದ ಅಂಗವಾಗಿರುವುದು ತಪ್ಪೀತೆ?</verse>
				<verse number="17">ದೇಹವಿಡೀ ಕಣ್ಣೇ ಆದರೆ ಅದು ಕೇಳುವ ಬಗೆ ಹೇಗೆ? ಅಥವಾ ಅದು ಇಡೀ ಕಿವಿಯೇ ಆದರೆ, ಮೂಸಲು ಮೂಗು ಎಲ್ಲಿ?</verse>
				<verse number="18">ಸದ್ಯ, ದೇವರು ತಮ್ಮ ಚಿತ್ತಾನುಸಾರ, ಪ್ರತಿಯೊಂದು ಅಂಗವನ್ನು ಸರಿಯಾಗಿ ಜೋಡಿಸಿದ್ದಾರೆ.</verse>
				<verse number="19">ಅವೆಲ್ಲವೂ ಒಂದೇ ಅಂಗವಾಗಿದ್ದರೆ ಆಗ ದೇಹವೆಲ್ಲಿ?</verse>
				<verse number="20">ಹೀಗೆ ಅಂಗಗಳು ಅನೇಕವಾಗಿದ್ದರೂ ದೇಹ ಮಾತ್ರ ಏಕ.</verse>
				<verse number="21">ಹೀಗಿರಲಾಗಿ, “ನಿನ್ನ ಅವಶ್ಯಕತೆ ನನಗಿಲ್ಲ,” ಎಂದು ಕೈಗೆ, ಕಣ್ಣು ಹೇಳಲಾಗದು. ಅಂತೆಯೇ, “ನಿನ್ನ ಅವಶ್ಯಕತೆ ನನಗಿಲ್ಲ,” ಎಂದು ಕಾಲುಗಳಿಗೆ ತಲೆ ಹೇಳಲಾಗದು.</verse>
				<verse number="22">ಅಷ್ಟುಮಾತ್ರವಲ್ಲ, ಬಲಹೀನವಾಗಿ ತೋರುವ ಅಂಗಗಳೂ ನಮಗೆ ಬೇಕೇಬೇಕು.</verse>
				<verse number="23">ಅಲ್ಪವೆಂದೆಣಿಸುವ ಅಂಗಗಳನ್ನು ಅಧಿಕವಾಗಿ ಮಾನ್ಯಮಾಡುತ್ತೇವೆ. ಗೋಪ್ಯವಾಗಿಡತಕ್ಕವುಗಳನ್ನು ಶೀಲದಿಂದ ಸಂರಕ್ಷಿಸುತ್ತೇವೆ.</verse>
				<verse number="24">ಬಾಹ್ಯ ಅಂಗಗಳಿಗೆ ಇಂಥ ಸಂರಕ್ಷಣೆ ಅಗತ್ಯವಿರುವುದಿಲ್ಲ. ದೇಹವನ್ನು ನಿರ್ಮಿಸಿದ ದೇವರು ಗೌಣವೆಂದೆಣಿಸಲಾಗುವ ಅಂಗಗಳಿಗೂ ವಿಶೇಷ ಘನತೆಯನ್ನು ಇತ್ತಿದ್ದಾರೆ.</verse>
				<verse number="25">ದೇಹದಲ್ಲಿ ಭಿನ್ನಭೇದವಿಲ್ಲದೆ ಅಂಗಗಳು ಒಂದಕ್ಕೊಂದರ ಹಿತವನ್ನು ಗಮನಿಸುವಂತೆ ಮಾಡಿದ್ದಾರೆ.</verse>
				<verse number="26">ಒಂದು ಅಂಗಕ್ಕೆ ನೋವಾದರೆ, ಎಲ್ಲಾ ಅಂಗಗಳೂ ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ನಲಿವಾದರೆ, ಮಿಕ್ಕೆಲ್ಲಾ ಅಂಗಗಳು ಅದರೊಡನೆ ಸೇರಿ ನಲಿದಾಡುತ್ತವೆ.</verse>
				<verse number="27">ನೀವೆಲ್ಲರೂ ಕ್ರಿಸ್ತಯೇಸುವಿನ ದೇಹ ಆಗಿದ್ದೀರಿ; ಪ್ರತಿಯೊಬ್ಬನೂ ಈ ದೇಹದ ಅಂಗವಾಗಿದ್ದಾನೆ.</verse>
				<verse number="28">ದೇವರು ತಮ್ಮ ಸಭೆಯಲ್ಲಿ, ಮೊದಲನೆಯದಾಗಿ ಪ್ರೇಷಿತರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಪವಾಡಗಳನ್ನು ಎಸಗುವವರನ್ನು, ರೋಗಗಳನ್ನು ಗುಣಪಡಿಸುವವರನ್ನು, ಪರೋಪಕಾರಿಗಳನ್ನು, ಪರಿಪಾಲಕರನ್ನು, ಬಹುಭಾಷಾಪಂಡಿತರನ್ನು ನೇಮಿಸಿದ್ದಾರೆ.</verse>
				<verse number="29">ಎಲ್ಲರೂ ಪ್ರೇಷಿತರಲ್ಲ, ಎಲ್ಲರೂ ಪ್ರವಾದಿಗಳಲ್ಲ, ಎಲ್ಲರೂ ಬೋಧಕರಲ್ಲ, ಎಲ್ಲರೂ ಪವಾಡಪುರುಷರಲ್ಲ,</verse>
				<verse number="30">ಎಲ್ಲರೂ ರೋಗಗಳನ್ನು ಗುಣಪಡಿಸುವವರಲ್ಲ, ಎಲ್ಲರೂ ಪರೋಪಕಾರಿಗಳಲ್ಲ, ಎಲ್ಲರೂ ಪರಿಪಾಲಕರಲ್ಲ, ಎಲ್ಲರೂ ಬಹುಭಾಷಾಪಂಡಿತರಲ್ಲ, ಅಥವಾ ಎಲ್ಲರೂ ಆ ಭಾಷೆಗಳನ್ನು ವಿವರಿಸಿ ಹೇಳುವವರಲ್ಲ.</verse>
				<verse number="31">ಶ್ರೇಷ್ಠವಾದ ವರಗಳನ್ನು ನೀವು ಶ್ರದ್ಧಾಪೂರ್ವಕವಾಗಿ ಅಪೇಕ್ಷಿಸಿರಿ. ನಾನು ನಿಮಗೆ ಇನ್ನೂ ಸರ್ವೋತ್ತಮವಾದ ಮಾರ್ಗವನ್ನು ತೋರಿಸುತ್ತೇನೆ:</verse>
			</chapter>
			<chapter number="13">
				<verse number="1">ಸುರನರರ ನುಡಿಗಳ ನಾನಾಡಬಲ್ಲೆನಾದರೂ ಪರಮ ಪ್ರೀತಿಯೊಂದೆನಗಿಲ್ಲದಿರಲು ನಾ ಕೇವಲ ಗಣಗಣಿಸುವ ಘಂಟೆ, ಝಣಝಣಿಸುವ ಜಾಗಟೆ.</verse>
				<verse number="2">ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ.</verse>
				<verse number="3">ನನಗಿರುವುದೆಲ್ಲವನು ನಾ ದಾನಮಾಡೆ ದೇಹವನೆ ಸಜೀವ ದಹಿಸಲು ನೀಡೆ ನಾನಾಗಿರೆ ಪರಮ ಪ್ರೀತಿ ವಿಹೀನ ಏನದು ಜೀವನ, ನನಗೇನದು ಪ್ರಯೋಜನ?</verse>
				<verse number="4">ಸಹನೆ ಸೈರಣೆ, ದಯೆದಾಕ್ಷಿಣ್ಯ ಪ್ರೀತಿಯಲ್ಲಿವೆ. ಎಡೆಯಿಲ್ಲ ಅದರಲಿ ಗರ್ವಕೆ, ಮರ್ಮಕೆ, ಮೆರೆತಕೆ, ಮತ್ಸರಕೆ, ಸಿಡುಕಿಗೆ, ಸೊಕ್ಕಿಗೆ, ಸ್ವಾರ್ಥಕೆ, ಸೇಡುಗಳೆಣಿಕೆಗೆ. ನಲಿಯದು ಪ್ರೀತಿ ಅನೀತಿಯಲಿ ನಲಿಯದಿರದದು ಸತ್ಯದ ಜಯದಲಿ.</verse>
				<verse number="5"></verse>
				<verse number="6"></verse>
				<verse number="7">ನಂಬುವುದೆಲ್ಲವನು, ನಿರೀಕ್ಷಿಸುವುದೆಲ್ಲವನು, ಸಹಿಸಿಕೊಳ್ಳುವುದು ಸಮಸ್ತವನು ಪ್ರೀತಿಯದೆಂದೂ ಅರಿಯದು ಸೋಲನು.</verse>
				<verse number="8">ಅಳಿದುಹೋಗುವುವು ಭವಿಷ್ಯವಾಣಿ ಗತಿಸಿಹೋಗುವುದು ಬಹುಭಾಷಾ‍ ಶಕ್ತಿ ಹೋಗುವುವು ನಶಿಸಿ ಜ್ಞಾನ, ಬುದ್ಧಿ. ಆದರೆ ಅಮರವಾದುದು ಪರಮ ಪ್ರೀತಿ.</verse>
				<verse number="9"></verse>
				<verse number="10">ಅಪೂರ್ವವಾದುದು ನಮ್ಮಾ ಅರಿವೆಲ್ಲ ಪೂರ್ಣವಾದುದಲ್ಲ ಪ್ರವಾದನವದೆಲ್ಲ; ಪರಿಪೂರ್ಣತೆ ಪ್ರಾಪ್ತವಾಗಲು ಇಲ್ಲವಾಗುವುದು ಅಪೂರ್ಣತೆಯೆಲ್ಲ.</verse>
				<verse number="11">ಬಾಲಕ ನಾನಾಗಿರೆ ಆಡಿದೆ, ಮಾತಾಡಿದೆ, ಚಿಂತಿಸಿದೆ, ಸುಖದುಃಖಗಳ ಸವಿದೆ ಬಾಲಕನಂತೆ. ಬಲಿತು ಬೆಳೆದು ಮನುಜನಾದುದೆ ಬಾಲಿಶವಾದುದೆಲ್ಲವನು ಬದಿಗೊತ್ತಿದೆ.</verse>
				<verse number="12">ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ.</verse>
				<verse number="13">ನಿಲ್ಲುವುವು ನಂಬಿಕೆ, ನಿರೀಕ್ಷೆ, ಪ್ರೀತಿ ನೆಲೆಯಾಗಿ; ಈ ಮೂರಲಿ ಪ್ರೀತಿಯೇ ಪರಮೋನ್ನತವೆಂಬುದ ನೀನರಿ.</verse>
			</chapter>
			<chapter number="14">
				<verse number="1">ಪ್ರೀತಿಯನ್ನು ಅರಸಿರಿ. ಪವಿತ್ರಾತ್ಮರ ವರಗಳನ್ನು ಬಯಸಿರಿ. ದೇವರ ಸಂದೇಶವನ್ನು ಸಾರಲು ಹಂಬಲಿಸಿರಿ.</verse>
				<verse number="2">ಪರವಶಾಭಾಷೆಯನ್ನು ಆಡುವವನು ಮಾನವನೊಡನಲ್ಲ, ದೇವರೊಡನೆ ಮಾತನಾಡುತ್ತಾನೆ. ಪವಿತ್ರಾತ್ಮರ ಪ್ರೇರಣೆಯಿಂದ ನಿಗೂಢ ವಿಷಯಗಳ ಬಗ್ಗೆ ಮಾತನಾಡುವುದರಿಂದ ಯಾರೂ ಆತನ ಮಾತನ್ನು ಅರ್ಥಮಾಡಿಕೊಳ್ಳಲಾರರು.</verse>
				<verse number="3">ಅವನ ಮಾತು ಭಕ್ತಿಯನ್ನು ವೃದ್ಧಿಸುತ್ತದೆ. ಉತ್ಸಾಹವನ್ನುಂಟುಮಾಡುತ್ತದೆ, ಉಪಶಮನವನ್ನು ತರುತ್ತದೆ.</verse>
				<verse number="4">ಪರವಶಾಭಾಷೆಗಳನ್ನು ಆಡುವವನು ತನ್ನನ್ನೇ ಅಭಿವೃದ್ಧಿಗೊಳಿಸಿಕೊಳ್ಳುತ್ತಾನೆ. ಆದರೆ ದೇವರ ವಾಕ್ಯವನ್ನು ಸಾರುವವನು ಇಡೀ ಧರ್ಮಸಭೆಯನ್ನೇ ಅಭಿವೃದ್ಧಿಗೊಳಿಸುತ್ತಾನೆ.</verse>
				<verse number="5">ನೀವೆಲ್ಲರೂ ಪರವಶಾಭಾಷೆಗಳನ್ನು ಆಡಬಹುದಾದರೂ ದೇವರ ವಾಕ್ಯವನ್ನು ಸಾರುವವರಾಗಬೇಕೆಂಬುದೇ ನನ್ನ ಅಭಿಲಾಷೆ. ಪರವಶಾಭಾಷೆಗಳನ್ನು ಆಡುವಾತನು ಧರ್ಮಸಭೆಯ ಅಭಿವೃದ್ಧಿಗಾಗಿ ತನ್ನ ಮಾತಿನ ಅರ್ಥವನ್ನು ಹೇಳಲಾರನಾದರೆ, ಅವನಿಗಿಂತಲೂ ದೇವರ ವಾಕ್ಯವನ್ನು ಸಾರುವವನೇ ಶ್ರೇಷ್ಠನು.</verse>
				<verse number="6">ಸಹೋದರರೇ, ನಾನು ನಿಮ್ಮ ಬಳಿಗೆ ಬಂದು ದೇವರ ಶ್ರುತಿಯನ್ನು, ನೈಜ ಜ್ಞಾನವನ್ನು, ದೇವರ ವಾಕ್ಯವನ್ನು, ದಿವ್ಯಬೋಧೆಯನ್ನು ನೀಡದೆ ಪರವಶಾಭಾಷೆಗಳಲ್ಲಿಯೇ ಮಾತನಾಡಿದರೆ ನಿಮಗೆ ಸಿಗುವ ಲಾಭವಾದರೂ ಏನು?</verse>
				<verse number="7">ಕೊಳಲು, ವೀಣೆ ಮೊದಲಾದ ನಿರ್ಜೀವವಾದ್ಯಗಳು ನಾದವನ್ನು ಹೊಮ್ಮಿಸುತ್ತವೆ; ಅವುಗಳ ಸ್ವರಗಳಲ್ಲಿ ಯಾವ ವ್ಯತ್ಯಾಸವೂ ಕಂಡುಬರದಿದ್ದರೆ, ನುಡಿಸಿದ್ದು, ಬಾಜಿಸಿದ್ದು ಇಂತಹುದೇ ರಾಗವೆಂದು ತಿಳಿಯುವುದು ಹೇಗೆ?</verse>
				<verse number="8">ರಣಕಹಳೆಯು ನಿರ್ದಿಷ್ಟವಾದ ಧ್ವನಿಯನ್ನು ಮೊಳಗಿಸದಿದ್ದರೆ ಯಾರು ತಾನೇ ಯುದ್ಧಸನ್ನದ್ಧರಾಗುತ್ತಾರೆ?</verse>
				<verse number="9">ಅಂತೆಯೇ, ನೀವು ಸಹ ಪರವಶಾಭಾಷೆಯನ್ನು ಆಡುವಾಗ, ಇತರರಿಗೆ ಅದು ಅರ್ಥವಾಗದಿದ್ದರೆ, ಅವರು ನಿಮ್ಮ ಮಾತನ್ನು ತಿಳಿದುಕೊಳ್ಳುವುದಾದರೂ ಹೇಗೆ? ನಿಮ್ಮ ಮಾತು ಗಾಳಿ ಪಾಲಾಗುತ್ತದಷ್ಟೆ.</verse>
				<verse number="10">ಜಗತ್ತಿನಲ್ಲಿ ಎಷ್ಟೋ ಭಾಷೆಗಳಿವೆ. ಅವುಗಳಲ್ಲಿ ಒಂದಾದರೂ ಅರ್ಥರಹಿತವಾದುದಲ್ಲ.</verse>
				<verse number="11">ಭಾಷೆಯ ಅರ್ಥವು ನನಗಾಗದಿದ್ದರೆ ಮಾತನಾಡುವವನಿಗೆ ನಾನು ಪರಕೀಯನಂತಾಗುತ್ತೇನೆ; ನನಗೆ ಅವನು ಪರಕೀಯನಂತಾಗುತ್ತಾನೆ.</verse>
				<verse number="12">ಆದ್ದರಿಂದ ಪವಿತ್ರಾತ್ಮ ವರಗಳ ಮೇಲೆ ಆಸಕ್ತಿಯುಳ್ಳ ನೀವು, ಧರ್ಮಸಭೆಯನ್ನು ಅಭಿವೃದ್ಧಿಗೊಳಿಸಬಲ್ಲ ವರಗಳ ಮೇಲೆ ಆಸಕ್ತರಾಗಿರಿ.</verse>
				<verse number="13">ಪರವಶಾಭಾಷೆಗಳಲ್ಲಿ ಮಾತನಾಡುವವನು ತಾನಾಡುವ ಮಾತಿನ ಅರ್ಥವನ್ನು ಹೇಳುವ ಸಾಮರ್ಥ್ಯಕ್ಕಾಗಿ ದೇವರನ್ನು ಪ್ರಾರ್ಥಿಸಲಿ.</verse>
				<verse number="14">ಏಕೆಂದರೆ, ನಾನು ಪರವಶಾಭಾಷೆಯಲ್ಲಿ ಪ್ರಾರ್ಥಿಸಿದರೆ ನನ್ನ ಆತ್ಮವೇನೋ ಪ್ರಾರ್ಥಿಸಿದಂತೆ ಆಗುತ್ತದೆ; ಆದರೆ ಮನಸ್ಸು ಮಾತ್ರ ಅದನ್ನು ಗ್ರಹಿಸುವುದಿಲ್ಲ.</verse>
				<verse number="15">ಹಾಗಾದರೆ ಈಗ ನಾನೇನು ಮಾಡಬೇಕು? ಆತ್ಮದಿಂದಲೂ ಪ್ರಾರ್ಥಿಸಬೇಕು, ಮನಸ್ಸಿನಿಂದಲೂ ಪ್ರಾರ್ಥಿಸಬೇಕು, ಆತ್ಮದಿಂದಲೂ</verse>
				<verse number="16">ಸಭೆಯಲ್ಲಿ ನೀನು ಆತ್ಮದಿಂದ ಮಾತ್ರ ದೇವರ ಸ್ತುತಿಮಾಡಿದರೆ ನಿನ್ನ ಹಾಗೆ ಪರವಶನಲ್ಲದವನು ನಿನ್ನ ಕೃತಜ್ಞತಾ ಸ್ತುತಿಗೆ ‘ಆಮೆನ್’ ಎಂದು ಹೇಗೆ ತಾನೇ ಹೇಳಬಲ್ಲನು? ನೀನು ಹೇಳುವುದೇ ಅವನಿಗೆ ತಿಳಿಯುವುದಿಲ್ಲವಲ್ಲಾ!</verse>
				<verse number="17">ನೀನು ಮಾಡುವ ಕೃತಜ್ಞತಾಸ್ತುತಿ ಎಷ್ಟು ಚೆನ್ನಾಗಿದ್ದರೂ ಅವನ ಮಟ್ಟಿಗೆ ಅದು ನಿಷ್ಪ್ರಯೋಜಕವೇ.</verse>
				<verse number="18">ನಾನಾದರೋ ದೇವರ ದಯೆಯಿಂದ ನಿಮಗಿಂತಲೂ ಮಿಗಿಲಾಗಿ ಪರವಶಾಭಾಷೆಗಳನ್ನು ಆಡಬಲ್ಲೆ.</verse>
				<verse number="19">ಆದರೂ ಸಭೆಯಲ್ಲಿ ಪರವಶನಾಗಿ ಹತ್ತುಸಾವಿರ ನುಡಿಗಳನ್ನಾಡುವ ಬದಲು ಮನಸ್ಸಾರೆ ಐದೇ ಮಾತುಗಳನ್ನಾಡಿ ಉಪದೇಶಿಸುವುದು ಉತ್ತಮವೆಂದು ನನಗೆ ತೋರುತ್ತದೆ.</verse>
				<verse number="20">ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿ. ದುಷ್ಟ ವಿಷಯಗಳಲ್ಲಿ ಶಿಶುಗಳಂತೆ ಮುಗ್ಧರಾಗಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಂತೆ ಪ್ರೌಢರಾಗಿರಿ.</verse>
				<verse number="21">ಪವಿತ್ರಗ್ರಂಥದಲ್ಲಿ ಇಂತಿದೆ: ಅನ್ಯಭಾಷೆಯವರ ಮುಖಾಂತರ ಅನ್ಯದೇಶೀಯರ ಬಾಯ ಮುಖಾಂತರ ನಾನೆನ್ನ ಜನರೊಡನೆ ಮಾತಾಡಿದಾಗಲೂ ಎನ್ನ ಮಾತಿಗೆ ಕಿವಿಗೊಡರವರು, ಎಂದರು ಪ್ರಭು.”</verse>
				<verse number="22">ಪರವಶಾಭಾಷೆಗಳನ್ನು ಆಡುವುದರ ಸಾಕ್ಷ್ಯ ವಿಶ್ವಾಸಿಗಳಿಗಲ್ಲ, ಅವಿಶ್ವಾಸಿಗಳಿಗೆ. ದೇವರ ವಾಕ್ಯವನ್ನು ಪ್ರಬೋಧಿಸುವುದರ ಸಾಕ್ಷ್ಯವು ಅವಿಶ್ವಾಸಿಗಳಿಗಲ್ಲ, ವಿಶ್ವಾಸಿಗಳಿಗೆ.</verse>
				<verse number="23">ಒಂದು ಕಡೆ ಎಲ್ಲರೂ ಸಭೆ ಸೇರಿದಾಗ ಪ್ರತಿಯೊಬ್ಬನೂ ಪರವಶಾಭಾಷೆಗಳನ್ನು ಆಡಲು ಆರಂಭಿಸಿದರೆ ಅಲ್ಲಿಗೆ ಬರುವ ಅಪರಿಚಿತರು, ಅವಿಶ್ವಾಸಿಗಳು ನಿಮ್ಮನ್ನು ಹುಚ್ಚರೆಂದು ಕರೆಯಲಾರರೇ?</verse>
				<verse number="24">ಬದಲಾಗಿ, ಬರುವ ಅಪರಿಚಿತರ ಹಾಗೂ ಅವಿಶ್ವಾಸಿಗಳ ಮುಂದೆ ಎಲ್ಲರೂ ದೇವರ ವಾಕ್ಯವನ್ನು ಪ್ರಬೋಧಿಸಿದರೆ ಅವರಲ್ಲಿ ಒಬ್ಬನಾದರೂ ತಾನು ಕೇಳಿದ ಮಾತಿನಿಂದ ತನ್ನ ಪಾಪವನ್ನು ಒಪ್ಪಿಕೊಳ್ಳುತ್ತಾನೆ; ಅವನು ಎಲ್ಲರ ಮಾತಿನಿಂದ ತನ್ನನ್ನು ತಾನೇ ಪರೀಕ್ಷಿಸಿಕೊಳ್ಳುತ್ತಾನೆ.</verse>
				<verse number="25">ಅವನ ಅಂತರಾಳದ ವಿಚಾರಗಳು ಬಯಲಾಗುತ್ತವೆ. ಅವನು ಅಡ್ಡಬಿದ್ದು ದೇವರನ್ನು ಆರಾಧಿಸುತ್ತಾನೆ. “ದೇವರು ನಿಜವಾಗಿಯೂ ನಿಮ್ಮ ಮಧ್ಯೆ ಇದ್ದಾರೆ,” ಎಂದು ಪ್ರಚುರಪಡಿಸುತ್ತಾನೆ.</verse>
				<verse number="26">ಹಾಗಾದರೆ ಪ್ರಿಯ ಸಹೋದರರೇ, ನಾವು ನಡೆದುಕೊಳ್ಳಬೇಕಾದ ಬಗೆ ಹೇಗೆ? ನೀವು ಸಭೆ ಸೇರಿದಾಗ ನಿಮ್ಮಲ್ಲಿ ಒಬ್ಬನು ಹಾಡುತ್ತಾನೆ; ಇನ್ನೊಬ್ಬನು ಉಪದೇಶ ಮಾಡುತ್ತಾನೆ; ಮತ್ತೊಬ್ಬನು ದೇವರು ತನಗೆ ಶ್ರುತಪಡಿಸಿದ್ದನ್ನು ತಿಳಿಸುತ್ತಾನೆ; ಇನ್ನೂ ಒಬ್ಬನು ಪರವಶಾಭಾಷೆಯನ್ನಾಡುತ್ತಾನೆ; ಮಗದೊಬ್ಬನು ಅದಕ್ಕೆ ಅರ್ಥ ಹೇಳುತ್ತಾನೆ ಎಂದಿಟ್ಟುಕೊಳ್ಳೋಣ. ನೀವು ಏನು ಮಾಡಿದರೂ ಧರ್ಮಸಭೆಯ ಅಭಿವೃದ್ಧಿಗಾಗಿಯೇ ಮಾಡಬೇಕು.</verse>
				<verse number="27">ಪರವಶಾಭಾಷೆಯನ್ನು ಆಡುವುದಾದರೆ ಇಬ್ಬರು, ಹೆಚ್ಚೆಂದರೆ ಮೂವರು ಮಾತನಾಡಲಿ. ಆದರೆ ಒಬ್ಬರ ನಂತರ ಇನ್ನೊಬ್ಬರು ಮಾತನಾಡಲಿ. ಬೇರೊಬ್ಬರು ವಿವರಿಸಲಿ.</verse>
				<verse number="28">ವಿವರಿಸಬಲ್ಲವರು ಯಾರೂ ಇಲ್ಲವಾದರೆ, ಪರವಶಾಭಾಷೆಗಳನ್ನು ಆಡುವವನು ಸಭೆಯಲ್ಲಿ ಮೌನದಿಂದಿರಲಿ. ತನ್ನೊಳಗೆ ದೇವರೊಡನೆ ಮಾತನಾಡಿಕೊಳ್ಳಲಿ.</verse>
				<verse number="29">ದೇವರ ವಾಕ್ಯವನ್ನು ಬೋಧಿಸುವವರು ಇಬ್ಬರು ಇಲ್ಲವೆ ಮೂವರು ಮಾತ್ರ ಮಾತನಾಡಲಿ. ಉಳಿದವರು ಅವರ ಮಾತನ್ನು ವಿವೇಚಿಸಲಿ.</verse>
				<verse number="30">ಸಭೆಯಲ್ಲಿ ಕುಳಿತವರಲ್ಲಿ ಒಬ್ಬನಿಗೆ ದೇವರ ಶ್ರುತಿಲಭಿಸಿತೆಂದರೆ ಮೊದಲು ಮಾತನಾಡುತ್ತಿದ್ದವನು ಮೌನ ತಳೆಯಲಿ.</verse>
				<verse number="31">ನೀವು, ಒಬ್ಬರಾದ ಮೇಲೆ ಒಬ್ಬರು ದೇವರ ವಾಕ್ಯವನ್ನು ಬೋಧಿಸಬಹುದು. ಆಗ ಎಲ್ಲರೂ ಕಲಿತುಕೊಂಡು ಪ್ರೋತ್ಸಾಹಪಡೆಯಲು ಸಾಧ್ಯವಾಗುತ್ತದೆ.</verse>
				<verse number="32">ದೇವರ ವಾಕ್ಯವನ್ನು ಬೋಧಿಸುವವರು ತಮ್ಮ ವಾಕ್ಚಾತುರ್ಯವನ್ನು ಸ್ವಾಧೀನದಲ್ಲಿಟ್ಟುಕೊಳ್ಳಬೇಕು.</verse>
				<verse number="33">ದೇವರು ಗಲಿಬಿಲಿಯನ್ನು ಬಯಸುವವರಲ್ಲ; ಅವರು ಶಾಂತಿ ಮತ್ತು ಸುವ್ಯವಸ್ಥೆಯ ದೇವರು.</verse>
				<verse number="34">ಎಲ್ಲ ಕ್ರೈಸ್ತಸಭೆಗಳಲ್ಲಿ ರೂಢಿಯಲ್ಲಿರುವಂತೆ ಮಹಿಳೆಯರು ಮೌನವಾಗಿರಲಿ; ಮಾತನಾಡಲು ಅವರಿಗೆ ಅನುಮತಿಯಿಲ್ಲ. ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಅವರು ಅಧೀನರಾಗಿರಬೇಕು.</verse>
				<verse number="35">ಅವರು ಏನನ್ನಾದರೂ ತಿಳಿಯಬಯಸಿದರೆ, ಮನೆಯಲ್ಲಿ ತಮ್ಮ ತಮ್ಮ ಗಂಡಂದಿರನ್ನು ಕೇಳಿ ತಿಳಿದುಕೊಳ್ಳಲಿ. ಮಹಿಳೆಯರು ಸಭಾಕೂಟದಲ್ಲಿ ಮಾತನಾಡುವುದು ಲಕ್ಷಣವಲ್ಲ.</verse>
				<verse number="36">ದೇವರ ವಾಕ್ಯ ನಿಮ್ಮಿಂದ ಹೊರಟಿತೋ? ಅಥವಾ ನಿಮಗೆ ಮಾತ್ರ ತಲುಪಿತೋ?</verse>
				<verse number="37">ನಿಮ್ಮಲ್ಲಿ ಯಾರಾದರೊಬ್ಬನು ತಾನು ದೇವರ ವಾಕ್ಯವನ್ನು ಬೋಧಿಸುವವನು ಅಥವಾ ಪವಿತ್ರಾತ್ಮ ಪ್ರೇರಣೆಯನ್ನು ಹೊಂದಿದವನು ಎಂದು ಭಾವಿಸುವುದಾದರೆ, ನಾನು ನಿಮಗೆ ಬರೆದಿರುವುದೆಲ್ಲ ಪ್ರಭುವಿನ ಆಜ್ಞೆಯೆಂದು ಚೆನ್ನಾಗಿ ತಿಳಿದುಕೊಳ್ಳಲಿ.</verse>
				<verse number="38">ಯಾರಾದರು ಇದನ್ನು ಒಪ್ಪಿಕೊಳ್ಳದಿದ್ದರೆ, ನೀವು ಅವರನ್ನು ಒಪ್ಪಿಕೊಳ್ಳಬೇಕಾಗಿಲ್ಲ.</verse>
				<verse number="39">ಸಹೋದರರೇ, ದೇವರ ವಾಕ್ಯವನ್ನು ಸಾರುವುದರಲ್ಲಿ ಆಸಕ್ತರಾಗಿರಿ. ಪರವಶಾಭಾಷೆಗಳನ್ನು ಆಡುವವರನ್ನು ತಡೆಯಬೇಡಿ.</verse>
				<verse number="40">ಆದರೆ ಎಲ್ಲವನ್ನು ಒಪ್ಪವಾಗಿ, ಓರಣವಾಗಿ ಮಾಡಿರಿ.</verse>
			</chapter>
			<chapter number="15">
				<verse number="1">ಪ್ರಿಯ ಸಹೋದರರೇ, ನಾನು ನಿಮಗೆ ಬೋಧಿಸಿದ ಶುಭಸಂದೇಶವನ್ನು ನೆನಪಿಗೆ ತಂದುಕೊಳ್ಳಿರಿ. ನೀವು ಅದನ್ನು ಸ್ವೀಕರಿಸಿದ್ದೀರಿ. ಅದರಲ್ಲಿ ನೆಲೆಯಾಗಿ ನಿಂತಿದ್ದೀರಿ.</verse>
				<verse number="2">ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಢವಾಗಿ ವಿಶ್ವಾಸಿಸಿದರೆ ನೀವು ಜೀವೋದ್ಧಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು.</verse>
				<verse number="3">ನಾನು ಪಡೆದುಕೊಂಡದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಾಗ ಮಾಡಿದರು.</verse>
				<verse number="4">ಅವರನ್ನು ಭೂಸ್ಥಾಪನೆ ಮಾಡಲಾಯಿತು. ಅದೇ ಗ್ರಂಥದ ಪ್ರಕಾರ ಮೂರನೆಯ ದಿನ ಅವರು ಪುನರುತ್ಥಾನ ಹೊಂದಿದರು.</verse>
				<verse number="5">ಅನಂತರ ಕೇಫನಿಗೂ ಹನ್ನೆರಡು ಮಂದಿಗೂ ಕಾಣಿಸಿಕೊಂಡರು.</verse>
				<verse number="6">ತರುವಾಯ ಒಂದೇ ಸಮಯದಲ್ಲಿ ಐನೂರಕ್ಕೂ ಹೆಚ್ಚಿನ ಮಂದಿ ಸಹೋದರರಿಗೆ ಪ್ರತ್ಯಕ್ಷರಾದರು. ಅವರಲ್ಲಿ ಕೆಲವರು ಸತ್ತುಹೋಗಿದ್ದರೂ ಬಹುಮಂದಿ ಇಂದಿಗೂ ಬದುಕಿದ್ದಾರೆ.</verse>
				<verse number="7">ಅದಾದ ಮೇಲೆ ಯಕೋಬನಿಗೂ ಅನಂತರ ಪ್ರೇಷಿತರೆಲ್ಲರಿಗೂ ಕಾಣಿಸಿಕೊಂಡರು.</verse>
				<verse number="8">ಕಟ್ಟಕಡೆಗೆ ದಿನತುಂಬುವ ಮೊದಲೇ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು.</verse>
				<verse number="9">ನಾನಾದರೋ ಪ್ರೇಷಿತರಲ್ಲಿ ಕನಿಷ್ಠನು, ಪ್ರೇಷಿತನೆಂಬ ಹೆಸರಿಗೂ ಅಪಾತ್ರನು. ಏಕೆಂದರೆ, ನಾನು ದೇವರ ಸಭೆಯನ್ನು ಹಿಂಸಿಸಿದೆನು.</verse>
				<verse number="10">ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.</verse>
				<verse number="11">ನಾನಾದರೇನು, ಅವರಾದರೇನು? ನಾವು ಸಾರುವ ಸಂದೇಶ ಒಂದೇ ಅದನ್ನು ನೀವು ನಂಬಿದ್ದೀರಿ.</verse>
				<verse number="12">ಕ್ರಿಸ್ತಯೇಸು ಮರಣದಿಂದ ಪುನರುತ್ಥಾನ ಹೊಂದಿದರು ಎಂದು ನಾವು ಸಾರುತ್ತಿರುವಲ್ಲಿ, ಸತ್ತವರು ಪುನರುತ್ಥಾನರಾಗುವುದಿಲ್ಲ ಎಂದು ನಿಮ್ಮಲ್ಲಿ ಕೆಲವರು ವಾದಿಸುವುದು ಹೇಗೆ?</verse>
				<verse number="13">ಸತ್ತವರಿಗೆ ಪುನರುತ್ಥಾನ ಇಲ್ಲವೆಂಬುದು ನಿಜವಾದರೆ ಕ್ರಿಸ್ತಯೇಸು ಪುನರುತ್ಥಾನ ಹೊಂದಲಿಲ್ಲ ಎಂದ ಹಾಗಾಯಿತು.</verse>
				<verse number="14">ಕ್ರಿಸ್ತಯೇಸು ಪುನರುತ್ಥಾನರಾಗಲಿಲ್ಲ ಎಂದರೆ ನಮ್ಮ ಬೋಧನೆ ಬರಿದು; ನಿಮ್ಮ ವಿಶ್ವಾಸವೂ ಬರಿದು.</verse>
				<verse number="15">ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂಬುದು ನಿಜವಾದರೆ ದೇವರು ಕ್ರಿಸ್ತಯೇಸುವನ್ನು ಪುನರುತ್ಥಾನಗೊಳಿಸಿಲ್ಲ ಎಂದಂತಾಯಿತು. ದೇವರು ಕ್ರಿಸ್ತಯೇಸುವನ್ನು ಸಾವಿನಿಂದ ಪುನರುತ್ಥಾನಗೊಳಿಸಿದ್ದಾರೆ ಎಂದು ಸಾಕ್ಷಿ ಹೇಳಿದ ನಾವು ಆಗ ದೇವರ ಬಗ್ಗೆಯೇ ಸುಳ್ಳುಸಾಕ್ಷಿ ಹೇಳಿದಂತಾಯಿತು.</verse>
				<verse number="16">ಸತ್ತವರು ಪುನರುತ್ಥಾನ ಹೊಂದುವುದಿಲ್ಲ ಎಂದರೆ ಕ್ರಿಸ್ತಯೇಸುವು ಪುನರುತ್ಥಾನ ಹೊಂದಲಿಲ್ಲ ಎಂದಂತಾಯಿತು.</verse>
				<verse number="17">ಕ್ರಿಸ್ತಯೇಸುವೇ ಪುನರುತ್ಥಾನ ಹೊಂದಿಲ್ಲ ಎಂದಮೇಲೆ ನಿಮ್ಮ ವಿಶ್ವಾಸವೇ ನಿರರ್ಥಕ; ಮತ್ತು ನೀವಿನ್ನೂ ನಿಮ್ಮ ಪಾಪಗಳಲ್ಲಿಯೇ ಮುಳುಗಿದ್ದೀರಿ;</verse>
				<verse number="18">ಅಷ್ಟೇ ಅಲ್ಲದೆ, ಕ್ರಿಸ್ತಯೇಸುವಿನಲ್ಲಿ ಮೃತರಾದವರೆಲ್ಲರೂ ವಿನಾಶವಾದರು.</verse>
				<verse number="19">ಕ್ರಿಸ್ತಯೇಸುವಿನಲ್ಲಿ ನಮಗಿರುವ ನಂಬಿಕೆ ಕೇವಲ ಬದುಕಿಗೆ ಸೀಮಿತವಾಗಿದ್ದರೆ ಜಗತ್ತಿನಲ್ಲಿ ನಮಗಿಂತ ನಿರ್ಭಾಗ್ಯರು ಬೇರೆ ಯಾರೂ ಇಲ್ಲ.</verse>
				<verse number="20">ಕ್ರಿಸ್ತಯೇಸು ಪುನರುತ್ಥಾನಹೊಂದಿದ್ದೇನೋ ಸತ್ಯಸ್ಯ ಸತ್ಯ. ಅವರ ಪುನರುತ್ಥಾನವು, ಸತ್ತವರು ಪುನರುತ್ಥಾನ ಹೊಂದುತ್ತಾರೆ ಎನ್ನುವುದಕ್ಕೆ ಪ್ರಮಾಣ.</verse>
				<verse number="21">ಒಬ್ಬ ಮನುಷ್ಯನಿಂದ ಸಾವು ಸಂಭವಿಸಿದಂತೆಯೇ ಒಬ್ಬ ಮನುಷ್ಯನಿಂದಲೇ ಸತ್ತವರಿಗೆ ಪುನರುತ್ಥಾನವು ಪರಿಣಮಿಸಿತು.</verse>
				<verse number="22">ಆದಾಮನ ಸಂಬಂಧದಿಂದ ಎಲ್ಲರೂ ಸಾವಿಗೀಡಾದಂತೆ ಕ್ರಿಸ್ತಯೇಸುವಿನ ಸಂಬಂಧದಿಂದ ಎಲ್ಲರೂ ಜೀವಂತರಾಗಿ ಏಳುತ್ತಾರೆ.</verse>
				<verse number="23">ಈ ಭಾಗ್ಯವನ್ನು ಒಬ್ಬೊಬ್ಬನೂ ಕ್ರಮಬದ್ಧ ರೀತಿಯಲ್ಲಿ ಪಡೆಯತ್ತಾನೆ. ಪ್ರಪ್ರಥಮ ಫಲವಾಗಿ ಕ್ರಿಸ್ತಯೇಸುವೇ ಜೀವಂತರಾದರು. ಅನಂತರ, ಕ್ರಿಸ್ತಯೇಸುವಿಗೆ ಸೇರಿದವರು ಯೇಸು ಪುನರಾಗಮಿಸುವಾಗ ಜೀವಂತರಾಗುತ್ತಾರೆ.</verse>
				<verse number="24">ಅಂತ್ಯ ಬರುವುದು ಅನಂತರವೇ. ಆಗ ಯೇಸು ಎಲ್ಲಾ ಆಧಿಪತ್ಯವನ್ನೂ ಅಧಿಕಾರವನ್ನೂ ಶಕ್ತಿಯನ್ನೂ ನಿರ್ಮೂಲಮಾಡಿ ತಂದೆಯಾದ ದೇವರಿಗೆ ಸಾಮ್ರಾಜ್ಯವನ್ನು ಒಪ್ಪಿಸಿಕೊಡುವರು.</verse>
				<verse number="25">ಶತ್ರುಗಳೆಲ್ಲರನ್ನು ತಮ್ಮ ಪಾದಪೀಠವಾಗಿಸಿಕೊಳ್ಳುವ ತನಕ ಅವರು ರಾಜ್ಯವಾಳಬೇಕಾಗಿದೆ.</verse>
				<verse number="26">ಕಟ್ಟಕಡೆಗೆ ನಿರ್ಮೂಲವಾಗುವ ಶತ್ರುವೆಂದರೆ ಮೃತ್ಯುವೇ.</verse>
				<verse number="27">“ದೇವರು ಎಲ್ಲವನ್ನು ಅಧೀನಪಡಿಸಿ ಆತನ ಪಾದಪೀಠವನ್ನಾಗಿಸಿದ್ದಾರೆ,” ಎಂದು ಲಿಖಿತವಾಗಿದೆ. “ಎಲ್ಲವನ್ನೂ ಅಧೀನಪಡಿಸಲಾಗಿದೆ,” ಎಂದು ಹೇಳುವಾಗ, ಹಾಗೆ ಅಧೀನಪಡಿಸಿದ ದೇವರು ಅವರಲ್ಲಿ ಸೇರಲಿಲ್ಲ ಎಂಬುದು ಸುಸ್ಪಷ್ಟವಾಗಿದೆ.</verse>
				<verse number="28">ಎಲ್ಲವೂ ಕ್ರಿಸ್ತಯೇಸುವಿಗೆ ಅಧೀನವಾದಾಗ ಪುತ್ರನಾದ ಅವರೇ, ಎಲ್ಲವನ್ನು ತನಗೆ ಅಧೀನಪಡಿಸಿದ ದೇವರಿಗೆ ಅಧೀನರಾಗುತ್ತಾರೆ. ಆಗ ದೇವರು ಸರ್ವರಿಗೆ ಸರ್ವಸ್ವವೂ ಆಗುತ್ತಾರೆ.</verse>
				<verse number="29">ಸತ್ತವರಿಗೆ ಪುನರುತ್ಥಾನವಿಲ್ಲದಿದ್ದರೆ, ಸತ್ತವರಿಗೋಸ್ಕರ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಾರಲ್ಲಾ ಅದರ ಉದ್ದೇಶವೇನು? ಸತ್ತವರಿಗೆ ಪುನರುತ್ಥಾನವೇ ಇಲ್ಲವಾದರೆ ಅವರಿಗೋಸ್ಕರ ದೀಕ್ಷಾಸ್ನಾನ ಪಡೆಯುವುದರ ಪ್ರಯೋಜನ ಏನು?</verse>
				<verse number="30">ನಾವು ಕೂಡ ಏಕೆ ಪ್ರತಿಕ್ಷಣದಲ್ಲಿಯೂ ಆಪತ್ತು ವಿಪತ್ತುಗಳನ್ನು ಎದುರಿಸುತ್ತಿದ್ದೇವೆ?</verse>
				<verse number="31">ಹೌದು ಸಹೋದರರೇ, ಪ್ರತಿದಿನವೂ ನಾನು ಸಾವಿನ ದವಡೆಯಲ್ಲಿದ್ದೇನೆ, ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ನಿಮ್ಮ ಬಗ್ಗೆ ನನಗಿರುವ ಹೆಮ್ಮೆಯಿಂದ ಇದನ್ನು ಪ್ರಮಾಣವಾಗಿ ಹೇಳುತ್ತಿದ್ದೇನೆ.</verse>
				<verse number="32">ಲೋಕ ಪ್ರಶಂಸೆಗಾಗಿ ನಾನು ಈ ಎಫೆಸದ ‘ಕಾಡುಮೃಗ’ಗಳೊಡನೆ ಹೋರಾಡಿದೆನಾದರೆ, ಅದರಿಂದ ಬರುವ ಲಾಭವಾದರೂ ಏನು? ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, “ಬನ್ನಿರಿ, ತಿನ್ನೋಣ, ಕುಡಿಯೋಣ, ಕಾದಿದೆಯಲ್ಲ ನಾಳೆ ಮರಣ,” ಎಂಬ ನಾಣ್ನುಡಿಯಂತೆ ನಡೆಯಬಹುದಲ್ಲಾ.</verse>
				<verse number="33">ಮೋಸಹೋಗದಿರಿ. ಏಕೆಂದರೆ, “ದುರ್ಜನರ ಸಂಗ ಸದಾಚಾರದ ಭಂಗ,”</verse>
				<verse number="34">ಜಾಗೃತರಾಗಿರಿ, ದುರ್ಮಾರ್ಗವನ್ನು ಬಿಟ್ಟುಬಿಡಿ, ಸನ್ಮತಿಯುಳ್ಳವರಾಗಿರಿ. ದೇವರನ್ನು ಅರಿಯದ ಮೂಢರು ನಿಮ್ಮಲ್ಲಿ ಕೆಲವರು ಇದ್ದಾರೆ. ನಿಮಗೆ ನಾಚಿಕೆ ಆಗಲೆಂದೇ ಇದನ್ನು ಹೇಳುತ್ತಿದ್ದೇನೆ.</verse>
				<verse number="35">ಸತ್ತವರನ್ನು ಮರಳಿ ಜೀವಂತರಾಗಿಸುವುದು ಹೇಗೆ ಸಾಧ್ಯ? ಅವರ ದೇಹಾಕೃತಿ ಹೇಗಿರುತ್ತದೆ? ಎಂದು ಯಾರಾದರೂ ಕೇಳಿಯಾರು.</verse>
				<verse number="36">ಮತಿಹೀನನೇ, ನೀನು ಬಿತ್ತಿದ ಬೀಜ ಸಾಯದಿದ್ದರೆ ಅದು ಜೀವ ತಾಳುವುದುಂಟೆ? ಇಲ್ಲ.</verse>
				<verse number="37">ನೀನು ಬಿತ್ತುವುದು ಗೋದಿಯನ್ನು ಅಥವಾ ಇನ್ನಾವುದೋ ಕಾಳನ್ನು; ಮುಂದಕ್ಕೆ ಬೆಳೆಯಲಿರುವ ಇಡೀ ಗಿಡವನ್ನಲ್ಲ.</verse>
				<verse number="38">ದೇವರು ತಮ್ಮ ಚಿತ್ತಾನುಸಾರ ಅದಕ್ಕೆ ದೇಹಾಕೃತಿಯನ್ನು ಕೊಡುತ್ತಾರೆ. ಒಂದೊಂದು ಬೀಜಕ್ಕೂ ಅದರದರ ದೇಹಾಕೃತಿಯನ್ನು ಕೊಡುತ್ತಾರೆ.</verse>
				<verse number="39">ಎಲ್ಲಾ ಶರೀರಗಳು ಒಂದೇ ವಿಧವಾಗಿಲ್ಲ; ಮನುಷ್ಯನ ಶರೀರ ಬೇರೆ, ಪಶುಗಳ ಶರೀರ ಬೇರೆ, ಪಕ್ಷಿಗಳ ಶರೀರ ಬೇರೆ, ಮೀನುಗಳ ಶರೀರ ಬೇರೆ.</verse>
				<verse number="40">ಸ್ವರ್ಗೀಯ ಶರೀರಗಳೂ ಇವೆ. ಪೃಥ್ವಿಯ ಶರೀರಗಳೂ ಇವೆ. ಆದರೆ ಒಂದರ ಸ್ವರೂಪ ಮತ್ತೊಂದರಂತೆ ಇಲ್ಲ.</verse>
				<verse number="41">ಸೂರ್ಯನ ಪ್ರಕಾಶ ಒಂದಾದರೆ, ಚಂದ್ರನ ಪ್ರಕಾಶವೇ ಇನ್ನೊಂದು; ನಕ್ಷತ್ರದ ಪ್ರಕಾಶವೇ ಬೇರೊಂದು. ನಕ್ಷತ್ರ ನಕ್ಷತ್ರಗಳ ಪ್ರಕಾಶವು ಸಹ ವೈವಿಧ್ಯವಾದುದು.</verse>
				<verse number="42">ಸತ್ತವರ ಪುನರುತ್ಥಾನವೂ ಹಾಗೆಯೇ. ಬಿತ್ತುವಂಥದ್ದು ಅಳಿದುಹೋಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದುದು. ಬಿತ್ತಿದ್ದು ಬಲಹೀನವಾದುದು; ಪುನರುತ್ಥಾನಹೊಂದುವಂಥದ್ದು, ಬಲಿಷ್ಠವಾದುದು.</verse>
				<verse number="43">ಬಿತ್ತಿದ್ದು ಕುರೂಪಿಯಾದುದು; ಪುನರುತ್ಥಾನಹೊಂದುವುದು ಕೋಮಲವಾದುದು.</verse>
				<verse number="44">ಬಿತ್ತಿದ್ದು ಭೌತಿಕ ದೇಹ; ಪುನರುತ್ಥಾನ ಹೊಂದುವಂಥದ್ದು ಆಧ್ಯಾತ್ಮಿಕ ದೇಹ. ಭೌತಿಕ ದೇಹ ಇರುವುದು ಸತ್ಯವಾದರೆ ಆಧ್ಯಾತ್ಮಿಕ ದೇಹ ಇರುವುದೂ ಸತ್ಯ.</verse>
				<verse number="45">ಪವಿತ್ರಗ್ರಂಥದಲ್ಲಿ ಲಿಖಿತವಾಗಿರುವಂತೆ ಮೊದಲ ಮಾನವನಾದ ಆದಾಮನು ಜೀವ ಪಡೆದ ವ್ಯಕ್ತಿ; ಕಡೆಯ ಆದಾಮನಾದರೋ ಜೀವ ಕೊಡುವ ಆತ್ಮ.</verse>
				<verse number="46">ಮೊದಲು ಆದುದು ಆಧ್ಯಾತ್ಮಿಕವಾದುದಲ್ಲ, ಪ್ರಾಕೃತವಾದುದು. ಅನಂತರ ಆದುದು ಆಧ್ಯಾತ್ಮಿಕವಾದುದು.</verse>
				<verse number="47">ಮೊದಲನೆಯ ಮಾನವನು ಮಣ್ಣಿನಿಂದಾದವನು; ಮಣ್ಣಿಗೆ ಸಂಬಂಧಪಟ್ಟವನು. ಎರಡನೆಯ ಮಾನವನಾದರೋ ಸ್ವರ್ಗದಿಂದ ಬಂದವನು.</verse>
				<verse number="48">ಮಣ್ಣಿಗೆ ಸಂಬಂಧಪಟ್ಟವರು ಮಣ್ಣಿನಿಂದ ಆದವನಂತೆಯೇ ಇರುತ್ತಾರೆ. ಸ್ವರ್ಗಕ್ಕೆ ಸಂಬಂಧಪಟ್ಟವರು ಸ್ವರ್ಗದಿಂದ ಬಂದವನಂತೆಯೇ ಇರುತ್ತಾರೆ.</verse>
				<verse number="49">ಮಣ್ಣಿನಿಂದ ಆದವನ ರೂಪವನ್ನು ನಾವು ಧರಿಸಿರುವಂತೆಯೇ ಸ್ವರ್ಗದಿಂದ ಬಂದಾತನ ರೂಪವನ್ನು ಧರಿಸುತ್ತೇವೆ.</verse>
				<verse number="50">ಸಹೋದರರೇ, ನಾನು ನಿಮಗೆ ಹೇಳುವುದೇನೆಂದರೆ: ರಕ್ತಮಾಂಸವು ದೇವರ ಸಾಮ್ರಾಜ್ಯಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ. ಅಂತೆಯೇ, ಅಳಿದುಹೋಗುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲು ಸಾಧ್ಯವಿಲ್ಲ.</verse>
				<verse number="51">ಇಗೋ, ಕೇಳೀ! ಇದುವರೆಗೂ ನಿಗೂಢವಾಗಿದ್ದ ರಹಸ್ಯವನ್ನು ನಾನು ನಿಮಗೆ ತಿಳಿಸುತ್ತೇನೆ. ನಾವೆಲ್ಲರೂ ಸಾಯುವುದಿಲ್ಲ. ಅಂತಿಮ ಕಹಳೆಯು ಮೊಳಗಿದಾಗ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರಲ್ಲಿ ನಾವೆಲ್ಲರೂ ಮಾರ್ಪಡುವೆವು. ಹೌದು, ಕಹಳೆ ಮೊಳಗುವುದು. ಸತ್ತವರು ಪುನರುತ್ಥಾನಹೊಂದಿ ಅಮರರಾಗುವರು ಮತ್ತು ನಾವು ಮಾರ್ಪಡುವೆವು.</verse>
				<verse number="52"></verse>
				<verse number="53">ಏಕೆಂದರೆ, ಅಳಿದುಹೋಗುವ ಶರೀರ ಅಮರತ್ವವನ್ನು ಧರಿಸಲೇಬೇಕು. ಮರ್ತ್ಯವಾದ ಶರೀರ ಅಮರತ್ವವನ್ನು ಧರಿಸಲೇಬೇಕು.</verse>
				<verse number="54">ಅಳಿದುಹೋಗುವಂಥದ್ದು ಅಮರತ್ವವನ್ನೂ ಮರ್ತ್ಯವಾದುದು ಅಮರ್ತ್ಯವನ್ನೂ ಧರಿಸಿಕೊಂಡಾಗ ಪವಿತ್ರಗ್ರಂಥದ ಈ ವಾಕ್ಯ ನೆರವೇರುವುದು:</verse>
				<verse number="55">ಸಾವಿಗೆ ಸೋಲಾಯಿತು, ಜಯವು ಸಂಪೂರ್ಣವಾಯಿತು. ಎಲೈ ಸಾವೇ, ನಿನ್ನ ಜಯವೆಲ್ಲಿ? ಎಲೈ ಸಾವೇ, ನಿನ್ನ ವಿಷಕೊಂಡಿಯೆಲ್ಲಿ?</verse>
				<verse number="56">ಪಾಪವೇ ಸಾವಿನ ವಿಷಕೊಂಡಿ. ಪಾಪಕ್ಕೆ ಶಕ್ತ್ಯಾಧಾರ ಶಾಸ್ತ್ರವಿಧಿಗಳೇ.</verse>
				<verse number="57">ಆದರೆ ನಮ್ಮ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ನಮಗೆ ಜಯವನ್ನು ದೊರಕಿಸಿಕೊಟ್ಟಿರುವ ದೇವರಿಗೆ ಸ್ತೋತ್ರ ಸಲ್ಲಲಿ!</verse>
				<verse number="58">ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.</verse>
			</chapter>
			<chapter number="16">
				<verse number="1">ದೇವಜನರಿಗೋಸ್ಕರ ಹಣ ಸಂಗ್ರಹಿಸುವುದರ ವಿಷಯವಾಗಿ ಹೇಳುವುದಾದರೆ: ಗಲಾತ್ಯದ ಸಭೆಗಳಿಗೆ ನಾನು ಕೊಟ್ಟ ನಿಯಮವನ್ನೇ ನೀವೂ ಅನುಸರಿಸಿರಿ. ನಾನು ಬಂದಾಗ ಹಣ ಸಂಗ್ರಹಿಸುವ ಅವಶ್ಯಕತೆ ಇರಬಾರದು.</verse>
				<verse number="2">ಈ ಕಾರಣ, ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸಂಪಾದನೆಗೆ ತಕ್ಕಂತೆ ಸ್ವಲ್ಪ ಹಣವನ್ನು ಪ್ರತಿ ವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ ಇಡಲಿ.</verse>
				<verse number="3">ನಾನು ಬಂದ ನಂತರ ನಿಮ್ಮ ಕೊಡುಗೆಯನ್ನು ಪರಿಚಯ ಪತ್ರದ ಸಮೇತ ನೀವು ಆರಿಸಿದವರ ಕೈಯಲ್ಲಿ ಜೆರುಸಲೇಮಿಗೆ ಕಳುಹಿಸುತ್ತೇನೆ.</verse>
				<verse number="4">ನಾನೇ ಹೋಗುವುದು ಉಚಿತವೆನಿಸಿದರೆ, ಅವರೂ ನನ್ನ ಜೊತೆಗೆ ಬರಲಿ.</verse>
				<verse number="5">ನಾನು ಮೊದಲು ಮಕೆದೋನಿಯದ ಪ್ರವಾಸವನ್ನು ಮುಗಿಸಿಕೊಂಡು ಅನಂತರ ನಿಮ್ಮ ಬಳಿಗೆ ಬರುತ್ತೇನೆ.</verse>
				<verse number="6">ಬಹುಶಃ ನಾನು ನಿಮ್ಮೊಡನೆ ತಂಗಬಹುದು. ಚಳಿಗಾಲವನ್ನು ಪೂರ್ತಿಯಾಗಿ ನಿಮ್ಮಲ್ಲಿ ಕಳೆಯಬೇಕಾಗಬಹುದು. ಆಮೇಲೆ ನಾನು ಹೋಗಬೇಕಾದ ಸ್ಥಳಕ್ಕೆ ನೀವು ನನ್ನನ್ನು ಕಳುಹಿಸಿಕೊಡಬೇಕು.</verse>
				<verse number="7">ಪ್ರಯಾಣದ ನಡುವೆ ನಿಮ್ಮನ್ನು ನೋಡಿ ಹೋಗಲು ನನಗೆ ಇಷ್ಟವಿಲ್ಲ. ಪ್ರಭುವಿನ ಚಿತ್ತವಾದರೆ, ಕೊಂಚಕಾಲವಾದರೂ ನಿಮ್ಮೊಡನೆ ಕಾಲಕಳೆಯಬೇಕೆಂದಿದ್ದೇನೆ.</verse>
				<verse number="8">ಪಂಚಾಶತ್ತಮ ಹಬ್ಬದ ತನಕ ನಾನು ಎಫೆಸದಲ್ಲಿಯೇ ಇರುತ್ತೇನೆ.</verse>
				<verse number="9">ಇಲ್ಲಿ ಅನೇಕ ವಿರೋಧಿಗಳಿದ್ದರೂ ಶುಭಸಂದೇಶದ ಕಾರ್ಯವನ್ನು ಕೈಗೊಳ್ಳಲು ಮಹಾದ್ವಾರಗಳು ನನಗೆ ತೆರೆದಿವೆ.</verse>
				<verse number="10">ತಿಮೊಥೇಯನು ಬಂದರೆ ಆತನಿಗೆ ಯಾವ ಚಿಂತೆಯೂ ಇರದಂತೆ ನೋಡಿಕೊಳ್ಳಿ. ಆತನು ನನ್ನ ಹಾಗೆ ಪ್ರಭುವಿನ ಸೇವೆಯಲ್ಲಿಯೇ ನಿರತನಾಗಿರುತ್ತಾನೆ.</verse>
				<verse number="11">ಯಾರೂ ಆತನನ್ನು ತಾತ್ಸಾರ ಮಾಡದಿರಲಿ. ಸಮಾಧಾನದಿಂದ ಆತನು ನನ್ನ ಬಳಿಗೆ ಬರುವಂತೆ ಕಳುಹಿಸಿಕೊಡಿ. ಆತನ ಆಗಮನವನ್ನು ನಾನು ಇತರ ಸಹೋದರರೊಡನೆ ಎದುರುನೋಡುತ್ತಿದ್ದೇನೆ.</verse>
				<verse number="12">ಸಹೋದರರೇ, ಅಪೊಲೋಸನ ವಿಷಯವಾಗಿ ಹೇಳುವುದಾದರೆ, ಆತನು ಇತರ ಸಹೋದರರೊಡನೆ ನಿಮ್ಮ ಬಳಿಗೆ ಬರಬೇಕೆಂದು ನಾನು ಬಹಳವಾಗಿ ಪ್ರೋತ್ಸಾಹಿಸಿದ್ದೇನೆ. ತಕ್ಷಣವೇ ಬರಲು ಆತನಿಗೆ ಮನಸ್ಸಿಲ್ಲ; ಸದವಕಾಶ ದೊರಕಿದಾಗ ಬರುತ್ತಾನೆ.</verse>
				<verse number="13">ಜಾಗರೂಕರಾಗಿರಿ, ವಿಶ್ವಾಸದಲ್ಲಿ ದೃಢರಾಗಿರಿ, ಧೈರ್ಯಶಾಲಿಗಳಾಗಿರಿ, ಸ್ಥೈರ್ಯದಿಂದ ಬಾಳಿರಿ.</verse>
				<verse number="14">ನೀವು ಮಾಡುವುದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.</verse>
				<verse number="15">ಸ್ತೇಫನನನ್ನು ಮತ್ತು ಆತನ ಕುಟುಂಬದವರನ್ನು ನೀವು ಬಲ್ಲಿರಿ. ಅವರು ಅಖಾಯದ ಪ್ರಥಮ ಕ್ರೈಸ್ತವಿಶ್ವಾಸಿಗಳು. ದೇವಜನರ ಸೇವೆಗೆ ತಮ್ಮನ್ನೇ ಸಮರ್ಪಿಸಿಕೊಂಡವರು. ನಾನು ನಿಮ್ಮಲ್ಲಿ ವಿನಂತಿಸುವುದೇನೆಂದರೆ:</verse>
				<verse number="16">ಇಂಥವರನ್ನು ಮತ್ತು ಅವರೊಡನೆ ದುಡಿದು ಸೇವೆಮಾಡುವವರನ್ನು ಮುಂದಾಳುಗಳೆಂದು ಸನ್ಮಾನಿಸಿರಿ.</verse>
				<verse number="17">ಸ್ತೇಫನನು, ಪೋರ್ತುನಾತನು ಮತ್ತು ಅಖಾಯಿಕನು ಬಂದುದರಿಂದ ನನಗೆ ಸಂತೋಷವುಂಟಾಯಿತು. ನೀವು ಇಲ್ಲದ್ದರಿಂದ ನನಗುಂಟಾದ ಕೊರತೆಯನ್ನು ಅವರು ನೀಗಿಸಿದ್ದಾರೆ.</verse>
				<verse number="18">ಅವರು ನಿಮ್ಮನ್ನು ಸಂತೈಸಿದಂತೆ ನನ್ನನ್ನೂ ಸಂತೈಸಿದ್ದಾರೆ, ಇಂಥವರನ್ನು ಗೌರವಿಸಬೇಕು.</verse>
				<verse number="19">ಏಷ್ಯ ಸೀಮೆಯಲ್ಲಿರುವ ಧರ್ಮಸಭೆಗಳ ಸಹೋದರರು ನಿಮಗೆ ವಂದನೆಗಳನ್ನು ತಿಳಿಸಿರುತ್ತಾರೆ. ಅಕ್ವಿಲನು ಮತ್ತು ಪ್ರಿಸಿಲ್ಲಳು ಹಾಗೂ ಅವರ ಮನೆಯಲ್ಲಿ ಸಭೆ ಸೇರುವ ಎಲ್ಲರೂ ಪ್ರಭುವಿನ ಹೆಸರಿನಲ್ಲಿ ನಿಮಗೆ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.</verse>
				<verse number="20">ಇಲ್ಲಿಯ ಸಹೋದರರೆಲ್ಲರೂ ನಿಮಗೆ ನಮಸ್ಕಾರ ಹೇಳಿದ್ದಾರೆ. ನೀವು ಸಹ ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.</verse>
				<verse number="21">ಪೌಲನಾದ ನಾನು ನನ್ನ ಸ್ವಂತ ಕೈಬರಹದಿಂದ ನಿಮಗೆ ವಂದನೆಯನ್ನು ಬರೆಯುತ್ತಿದ್ದೇನೆ.</verse>
				<verse number="22">ಯಾರಾದರೂ ಪ್ರಭುವನ್ನು ಪ್ರೀತಿಸದೆಹೋದರೆ ಅವರಿಗೆ ಧಿಕ್ಕಾರ! “ಮಾರನಥ\ - ಪ್ರಭುವೇ ಬನ್ನಿ.</verse>
				<verse number="23">ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೆಲ್ಲರಲ್ಲಿರಲಿ.</verse>
				<verse number="24">ಕ್ರಿಸ್ತಯೇಸುವಿನಲ್ಲಿ ನಿಮ್ಮೆಲ್ಲರಿಗೂ ನನ್ನ ಪ್ರೀತಿವಾತ್ಸಲ್ಯಗಳು!</verse>
			</chapter>
		</book>
		<book number="47">
			<chapter number="1">
				<verse number="1">ಕೊರಿಂಥದಲ್ಲಿರುವ ದೇವರ ಸಭೆಗೂ ಅಖಾಯ ಸೀಮೆಯಲ್ಲಿರುವ ಎಲ್ಲಾ ದೇವಜನರಿಗೂ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾದ ಪೌಲನು ಸಹೋದರ ತಿಮೊಥೇಯನೊಡನೆ ಸೇರಿ ಬರೆಯುವ ಪತ್ರ.</verse>
				<verse number="2">ನಮ್ಮ ತಂದೆಯಾದ ದೇವರಿಂದಲೂ ಪ್ರಭುವಾದ ಯೇಸುಕ್ರಿಸ್ತರಿಂದಲೂ ನಿಮಗೆ ಆಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ!</verse>
				<verse number="3">ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ಅವರು ಕರುಣಾಭರಿತ ತಂದೆ; ಸಕಲ ಸಾಂತ್ವನವನ್ನೀಯುವ ದೇವರು.</verse>
				<verse number="4">ನಮಗೆ ಒದಗುವ ಎಲ್ಲಾ ಸಂಕಷ್ಟಗಳಲ್ಲಿ ಅವರು ನಮ್ಮನ್ನು ಸಂತೈಸುತ್ತಾರೆ. ಹೀಗೆ ದೇವರಿಂದ ದೊರೆತ ಆದರಣೆಯಿಂದ ವಿವಿಧ ಸಂಕಷ್ಟಗಳಲ್ಲಿ ನರಳುತ್ತಿರುವವರನ್ನು ಸಂತೈಸುವುದಕ್ಕೆ ನಾವು ಶಕ್ತರಾಗುತ್ತೇವೆ.</verse>
				<verse number="5">ಕ್ರಿಸ್ತಯೇಸುವಿನ ಯಾತನೆಯು ನಮ್ಮ ಬಾಳಿನಲ್ಲಿ ತುಂಬಿರುವಂತೆ ಅವರ ಮುಖಾಂತರ ಲಭಿಸುವ ಸಾಂತ್ವನವೂ ನಮ್ಮಲ್ಲಿ ತುಂಬಿರುತ್ತದೆ.</verse>
				<verse number="6">ನಾವು ಕಷ್ಟಸಂಕಟಗಳನ್ನು ಸಹಿಸಬೇಕಾಗುವುದು ಸಹ ನಿಮ್ಮ ಉಪಶಮನ ಹಾಗೂ ಸಾಂತ್ವನಕ್ಕಾಗಿಯೇ. ನಮ್ಮ ಕಷ್ಟಸಂಕಟಗಳು ನಿವಾರಣೆಯಾದರೆ ಅದೂ ನಿಮ್ಮ ಆದರಣೆಗಾಗಿಯೇ. ನಾವು ಪಡುವ ಯಾತನೆಯನ್ನು ನೀವು ಸಹನೆಯಿಂದ ಅನುಭವಿಸುವಂತೆ ಅದು ಹುರಿದುಂಬಿಸುತ್ತದೆ.</verse>
				<verse number="7">ನಿಮ್ಮಲ್ಲಿ ನಮಗೆ ಅಚಲವಾದ ಭರವಸೆಯಿದೆ. ಏಕೆಂದರೆ, ನಮ್ಮ ಯಾತನೆಗಳಲ್ಲಿ ನೀವು ಪಾಲುಗೊಳ್ಳುವಂತೆ ನಾವು ಪಡೆಯುವ ಸಾಂತ್ವನದಲ್ಲಿಯೂ ನೀವು ಸಹಭಾಗಿಗಳಾಗಿದ್ದೀರಿ, ಎಂಬುದು ನಮಗೆ ಗೊತ್ತಿದೆ.</verse>
				<verse number="8">ಸಹೋದರರೇ, ಏಷ್ಯಾ ಪ್ರಾಂತ್ಯದಲ್ಲಿ ನಮಗೊದಗಿದ ಹಿಂಸೆಬಾಧೆಗಳು ನಿಮಗೆ ತಿಳಿದಿವೆಯಷ್ಟೆ. ಅಲ್ಲಿ ಸಹಿಸಲಸಾಧ್ಯವಾದಷ್ಟು ಸಂಕಟವನ್ನು ಅನುಭವಿಸಬೇಕಾಯಿತು. ನಾವು ಬದುಕುವ ಆಶೆಯನ್ನೇ ಬಿಡಬೇಕಾಯಿತು.</verse>
				<verse number="9">ನಿಜವಾಗಿಯೂ ನಮಗೆ ಮರಣದಂಡನೆ ವಿಧಿಸಲಾಗಿದೆಯೆಂದು ಭಾವಿಸಿದೆವು. ಇದರಿಂದ ನಾವು ನಮ್ಮ ಸ್ವಂತ ಶಕ್ತಿಯನ್ನೇ ನಂಬಿಕೊಳ್ಳದೆ, ಸತ್ತವರನ್ನು ಪುನರುತ್ಥಾನಗೊಳಿಸುವ ದೇವರಲ್ಲಿ ಭರವಸೆಯಿಡುವಂತೆ ಹೀಗಾಯಿತು.</verse>
				<verse number="10">ದೇವರೇ ನಮ್ಮನ್ನು ಈ ಭಯಂಕರ ಮರಣದಿಂದ ಪಾರುಮಾಡಿದರು. ಇನ್ನು ಮುಂದಕ್ಕೂ ಪಾರುಮಾಡುವರು. ಹೌದು, ನೀವು ಸಹ ನಮಗಾಗಿ ಪ್ರಾರ್ಥಿಸುತ್ತಾ ನಮ್ಮೊಡನೆ ಸಹಕರಿಸಿದರೆ, ಇನ್ನು ಮುಂದಕ್ಕೂ ನಮ್ಮನ್ನು ಪಾರುಮಾಡುವರು ಎಂಬ ಭರವಸೆಯಿಂದ ಇದ್ದೇವೆ. ಇದರ ಫಲವಾಗಿ ನಮಗೆ ದೊರೆಯುವ ವರದಾನಗಳಿಗಾಗಿ ಅನೇಕರು ನಮ್ಮ ಪರವಾಗಿ ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸುವರು.</verse>
				<verse number="11"></verse>
				<verse number="12">ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.</verse>
				<verse number="13">ನೀವು ಓದಿ ಗ್ರಹಿಸಿಕೊಳ್ಳಬಲ್ಲ ವಿಷಯಗಳನ್ನು ಮಾತ್ರವೇ ನಾವು ನಿಮಗೆ ಬರೆದಿದ್ದೇವೆ. ನಮ್ಮನ್ನು ನೀವಿನ್ನೂ ಭಾಗಶಃ ಅರಿತುಕೊಂಡಿದ್ದೀರಿ. ಮುಂದಕ್ಕಾದರೂ ನೀವು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳುವಿರೆಂಬ ಭರವಸೆ ನನಗಿದೆ. ಹಾಗೆಯೇ ‘ಪ್ರಭುವಿನ ದಿನದಂದು ನಾವು ನಿಮ್ಮನ್ನು ಕುರಿತು ಹೆಮ್ಮೆಪಡುವಂತೆ ನೀವೂ ನಮ್ಮನ್ನು ಕುರಿತು ಹೆಮ್ಮೆಪಡುವಿರಿ.</verse>
				<verse number="14"></verse>
				<verse number="15">ಈ ನಂಬಿಕೆಯಿಂದಲೇ ನಿಮಗೆ ಇಮ್ಮಡಿ ಸಂತೋಷ ಲಭಿಸಬೇಕೆಂದು ನಾನು ನಿಮ್ಮ ಬಳಿಗೆ ಈ ಮುಂಚಿತವಾಗಿಯೇ ಬರಬೇಕೆಂದಿದ್ದೆ.</verse>
				<verse number="16">ನಾನು ಮಕೆದೋನಿಯಕ್ಕೆ ಹೋಗುವ ದಾರಿಯಲ್ಲಿ ಒಮ್ಮೆ ನಿಮ್ಮನ್ನು ಭೇಟಿಮಾಡಬೇಕು ಎಂದಿದ್ದೆ; ಮಕೆದೋನಿಯದಿಂದ ಹಿಂದಿರುಗುವಾಗ ಇನ್ನೊಮ್ಮೆ ಭೇಟಿಯಿತ್ತು ನಿಮ್ಮ ನೆರವಿನಿಂದ ಜುದೇಯ ಪ್ರವಾಸವನ್ನು ಕೈಗೊಳ್ಳಬೇಕೆಂದು ಆಲೋಚಿಸಿದೆ.</verse>
				<verse number="17">ಹೀಗೆ ಆಲೋಚಿಸುತ್ತಿದ್ದಾಗ ನಾನು ಚಂಚಲಚಿತ್ತನಾಗಿದ್ದೆನೋ? ಕೇವಲ ಪ್ರಾಪಂಚಿಕನಂತೆ ಈ ಕ್ಷಣ ಹೌದು, ಮರುಕ್ಷಣ ಇಲ್ಲ ಎಂದು ಹೇಳುವವನಂತಿದ್ದೆನೋ?</verse>
				<verse number="18">ಎಂದಿಗೂ ಇಲ್ಲ, ನಾನು ನಿಮಗೆ ಕೊಟ್ಟ ಮಾತು ದ್ವಂದ್ವಾರ್ಥವುಳ್ಳದ್ದಾಗಿರಲಿಲ್ಲ. ಇದಕ್ಕೆ ದೇವರೇ ಸಾಕ್ಷಿ.</verse>
				<verse number="19">ನಾವು, ಅಂದರೆ ಸಿಲ್ವಾನ, ತಿಮೊಥೆಯ ಮತ್ತು ನಾನು, ಪ್ರಚಾರಮಾಡಿದ ದೇವರ ಪುತ್ರರಾದ ಯೇಸುಕ್ರಿಸ್ತರು, ಈ ಕ್ಷಣ ಹೌದು, ಮರುಕ್ಷಣ ಇಲ್ಲ ಎಂದು ಹೇಳುವವರಲ್ಲ, ಅವರು ದೇವರ ತಥಾಸ್ತು ಆಗಿದ್ದಾರೆ.</verse>
				<verse number="20">ಏಕೆಂದರೆ, ದೇವರು ಮಾಡಿದ ಸಮಸ್ತ ವಾಗ್ದಾನಗಳಿಗೂ ‘ಹೌದು’ ಎಂಬ ಉತ್ತರ ಸಾಕ್ಷಾತ್ ಅವರೇ. ಈ ಕಾರಣದಿಂದಲೇ ನಾವು ದೇವರ ಮಹಿಮೆಯನ್ನು ಸಾರುವಾಗ ಯೇಸುಕ್ರಿಸ್ತರ ಮುಖಾಂತರವೇ ‘ಆಮೆನ್’ ಎನ್ನುತ್ತೇವೆ.</verse>
				<verse number="21">ನಿಮ್ಮನ್ನೂ ನಮ್ಮನ್ನೂ ಕ್ರಿಸ್ತಯೇಸುವಿನಲ್ಲಿ ಒಂದಾಗಿಸಿ ಸ್ಥಿರಪಡಿಸಿದವರು ದೇವರೇ. ನಮ್ಮನ್ನು ಅಭಿಷೇಕಿಸಿದವರೂ ಮೀಸಲಾಗಿಟ್ಟವರೂ ದೇವರೇ.</verse>
				<verse number="22">ಅವರೇ ನಮ್ಮ ಮೇಲೆ ತಮ್ಮ ಮುದ್ರೆಯನ್ನೊತ್ತಿ ನಮ್ಮ ಅಂತರಂಗದಲ್ಲಿ ಪವಿತ್ರಾತ್ಮ ಅವರನ್ನು ಖಾತರಿಯಾಗಿ ಇರಿಸಿದ್ದಾರೆ.</verse>
				<verse number="23">ನಿಮಗೆ ತೊಂದರೆ ಆಗಬಾರದೆಂದು ನಾನು ಕೊರಿಂಥಕ್ಕೆ ಬರಲಿಲ್ಲ. ಇದನ್ನು ಹೃದಯಪೂರ್ವಕವಾಗಿ ಹೇಳುತ್ತಿದ್ದೇನೆ. ಇದಕ್ಕೆ ದೇವರೇ ಸಾಕ್ಷಿ.</verse>
				<verse number="24">ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತಿದ್ದೇವೆಂದು ತಿಳಿಯಬೇಡಿ; ವಿಶ್ವಾಸದಲ್ಲಿ ನೀವು ದೃಢರಾಗಿಯೇ ಇದ್ದೀರಿ. ನಿಮ್ಮ ಸಂತೋಷಕ್ಕಾಗಿ ನಾವು ನಿಮ್ಮೊಡನೆ ಸಹಕರಿಸುತ್ತೇವೆ.</verse>
			</chapter>
			<chapter number="2">
				<verse number="1">ಇನ್ನೊಮ್ಮೆ ನಿಮ್ಮ ಬಳಿಗೆ ಬಂದು, ನಿಮ್ಮನ್ನು ದುಃಖಕ್ಕೀಡುಮಾಡಬಾರದೆಂದು ನಾನು ನಿರ್ಧರಿಸಿಕೊಂಡೆ.</verse>
				<verse number="2">ನಾನೇ ನಿಮ್ಮನ್ನು ದುಃಖಪಡಿಸಿದೆನಾದರೆ, ನನ್ನನ್ನು ಸಂತೋಷಪಡಿಸುವವರು ಯಾರು? ನನ್ನಿಂದ ದುಃಖಕ್ಕೆ ಒಳಗಾದ ನೀವೇ ಅಲ್ಲವೇ?</verse>
				<verse number="3">ಇದಕ್ಕಾಗಿಯೇ ನಾನು ಆ ಪತ್ರವನ್ನು ಬರೆದದ್ದು; ನನ್ನನ್ನು ಸಂತೋಷಪಡಿಸಬೇಕಾದವರೇ ನನ್ನನ್ನು ದುಃಖಕ್ಕೆ ಈಡುಮಾಡಬಾರದೆಂದು ನಾನು ಬರಲಿಲ್ಲ. ನನ್ನ ಸಂತೋಷವೇ ನಿಮ್ಮ ಸಂತೋಷವೆಂದು ನೀವು ಭಾವಿಸುತ್ತೀರೆಂದು ಬಲ್ಲೆ.</verse>
				<verse number="4">ಮನೋವ್ಯಥೆಯಿಂದಲೂ ಹೃದಯವೇದನೆಯಿಂದಲೂ ಕಣ್ಣೀರಿಡುತ್ತಾ ನಾನು ನಿಮಗೆ ಪತ್ರ ಬರೆದೆ. ನಿಮ್ಮನ್ನು ದುಃಖಕ್ಕೀಡುಮಾಡಬೇಕೆಂದಲ್ಲ, ನಿಮ್ಮನ್ನು ಎಷ್ಟರಮಟ್ಟಿಗೆ ಪ್ರೀತಿಸುತ್ತಿರುವೆನೆಂದು ನೀವು ತಿಳಿದುಕೊಳ್ಳಬೇಕೆಂದು ಬರೆದೆ.</verse>
				<verse number="5">ಒಬ್ಬನು ದುಃಖವನ್ನುಂಟುಮಾಡಿದ್ದಾನಾದರೆ, ಅವನು ಹಾಗೆ ಮಾಡಿದ್ದು ನನಗೊಬ್ಬನಿಗೇ ಅಲ್ಲ. ಒಂದು ವಿಧದಲ್ಲಿ ನಿಮಗೆಲ್ಲರಿಗೂ ಸಹ ದುಃಖವನ್ನುಂಟುಮಾಡಿದ್ದಾನೆ. ಅವನ ಮೇಲೆ ಹೆಚ್ಚು ಕಠಿಣನಾಗಿರಲು ನನಗೆ ಇಷ್ಟವಿಲ್ಲ.</verse>
				<verse number="6">ನಿಮ್ಮಲ್ಲಿ ಬಹುಮಂದಿ ಅವನಿಗೆ ವಿಧಿಸಿರುವ ಶಿಕ್ಷೆಯೇ ಸಾಕಾಗಿದೆ.</verse>
				<verse number="7">ಈಗ ನೀವು ಅವನನ್ನು ಕ್ಷಮಿಸಿ ಸಂತೈಸಿರಿ. ಇಲ್ಲವಾದರೆ ಅವನು ಅತೀವ ದುಃಖದಲ್ಲಿಯೇ ಮುಳುಗಿಹೋದಾನು.</verse>
				<verse number="8">ನಿಮ್ಮ ಪ್ರೀತಿ ಅವನಿಗೆ ಮನದಟ್ಟಾಗುವಂತೆ ನಡೆದುಕೊಳ್ಳಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.</verse>
				<verse number="9">ನೀವು ಎಲ್ಲ ವಿಷಯಗಳಲ್ಲೂ ನನಗೆ ವಿಧೇಯರಾಗಿದ್ದೀರೋ ಇಲ್ಲವೋ ಎಂದು ಪರೀಕ್ಷಿಸಲು ನಾನು ಬರೆದದ್ದು.</verse>
				<verse number="10">ನೀವು ಯಾರನ್ನು ಕ್ಷಮಿಸುತ್ತೀರೋ ಅವನನ್ನು ನಾನೂ ಕ್ಷಮಿಸುತ್ತೇನೆ. ನಾನು ಯಾವುದನ್ನಾದರೂ ಕ್ಷಮಿಸಿದ್ದರೆ ಅಥವಾ ಕ್ಷಮಿಸಬೇಕಾಗಿದ್ದರೆ ಅದನ್ನು ಕ್ರಿಸ್ತಯೇಸುವಿನ ಸಮ್ಮುಖದಲ್ಲಿ ನಿಮಗೋಸ್ಕರ ಕ್ಷಮಿಸುತ್ತೇನೆ.</verse>
				<verse number="11">ಸೈತಾನನ ಕುತಂತ್ರಗಳನ್ನು ನಾವು ಅರಿಯದವರಲ್ಲ; ಅವನ ಕೈ ಮೇಲಾಗದಂತೆ ನಾವು ನೋಡಿಕೊಳ್ಳಬೇಕು.</verse>
				<verse number="12">ಯೇಸುಕ್ರಿಸ್ತರ ಶುಭಸಂದೇಶವನ್ನು ಸಾರುವುದಕ್ಕೆ ನಾನು ತ್ರೋವಕ್ಕೆ ಬಂದಾಗ, ಪ್ರಭುವಿನ ಕೃಪೆಯಿಂದ ನನಗೆ ಸದವಕಾಶದ ಬಾಗಿಲು ತೆರೆದಿತ್ತು.</verse>
				<verse number="13">ಆದರೆ ನನ್ನ ಸಹೋದರ ತೀತನನ್ನು ಅಲ್ಲಿ ಕಾಣದೆಹೋದುದರಿಂದ ನನ್ನ ಮನಸ್ಸಿಗೆ ನೆಮ್ಮದಿ ಇಲ್ಲವಾಯಿತು. ಕೂಡಲೇ ಅಲ್ಲಿಯ ಜನರಿಂದ ಬೀಳ್ಕೊಂಡು ಮಕೆದೋನಿಯಕ್ಕೆ ಹೊರಟೆ.</verse>
				<verse number="14">ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನಮ್ಮನ್ನು ಸದಾ ವಿಜಯೋತ್ಸವದತ್ತ ನಡೆಸುವ ಹಾಗು ಕ್ರಿಸ್ತಜ್ಞಾನವೆಂಬ ಪರಿಮಳವನ್ನು ಎಲ್ಲೆಡೆಯಲ್ಲೂ ನಮ್ಮ ಮೂಲಕ ಪಸರಿಸುವ ದೇವರಿಗೆ ವಂದನೆಗಳು.</verse>
				<verse number="15">ಹೌದು, ಉದ್ಧಾರದ ಮಾರ್ಗದಲ್ಲಿರುವವರಿಗೂ ವಿನಾಶಮಾರ್ಗದಲ್ಲಿರುವವರಿಗೂ ಕ್ರಿಸ್ತಯೇಸುವೇ ದೇವರಿಗರ್ಪಿಸಿದ ಪರಿಮಳದಂತೆ ನಾವು ಇದ್ದೇವೆ.</verse>
				<verse number="16">ವಿನಾಶ ಮಾರ್ಗದಲ್ಲಿರುವವರಿಗೆ ಇದು ಮೃತ್ಯುಕಾರಕ ಗಂಧ; ಉದ್ಧಾರ ಮಾರ್ಗದಲ್ಲಿರುವವರಿಗೆ ಇದು ಸಜ್ಜೀವದಾಯಕ ಸುಗಂಧ. ಇಂಥ ಕಾರ್ಯಕ್ಕೆ ಸಮರ್ಥರು ಯಾರು?</verse>
				<verse number="17">ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.</verse>
			</chapter>
			<chapter number="3">
				<verse number="1">ನಾವೀಗ ಆತ್ಮಸ್ತುತಿಯನ್ನು ಮಾಡಲು ಆರಂಭಿಸಿದಂತೆ ತೋರುತ್ತದೆಯೇ? ಅಥವಾ ನಿಮಗೆ ತೋರಿಸಲು ಯೋಗ್ಯತಾಪತ್ರ ಇತರರಿಗೆ ಬೇಕಾಗಿರುವಂತೆ ನಮಗೂ ಬೇಕಾಗಿದೆಯೇ? ಇಲ್ಲವೆ, ಯೋಗ್ಯತಾಪತ್ರವನ್ನು ನಿಮ್ಮಿಂದ ಪಡೆಯುವ ಅವಶ್ಯಕತೆ ನಮಗೂ ಇದೆಯೇ?</verse>
				<verse number="2">ನೀವೇ ನಮ್ಮ ಯೋಗ್ಯತಾಪತ್ರ, ನಮ್ಮ ಹೃದಯ ಪಟಲದ ಮೇಲೆ ಬರೆಯಲಾದ ಪತ್ರ. ಅದನ್ನು ಯಾರು ಬೇಕಾದರೂ ಗುರುತಿಸಬಹುದು. ಓದಿ ತಿಳಿದುಕೊಳ್ಳಬಹುದು.</verse>
				<verse number="3">ಕ್ರಿಸ್ತಯೇಸುವೇ ನಮ್ಮಿಂದ ಬರೆಸಿದ ಪತ್ರ ನೀವು; ಇದು ಸ್ಪಷ್ಟ. ಬರೆದಿರುವುದು ಶಾಯಿಯಿಂದಲ್ಲ, ಜೀವಂತ ದೇವರ ಪವಿತ್ರಾತ್ಮರಿಂದ. ಕೊರೆದದ್ದೂ ಕಲ್ಲಿನ ಮೇಲೆ ಅಲ್ಲ, ಮಾನವ ಹೃದಯದ ಮೇಲೆ.</verse>
				<verse number="4">ಕ್ರಿಸ್ತಯೇಸುವಿನ ಮುಖಾಂತರ ನಮಗೆ ದೇವರಲ್ಲಿ ಇಂಥ ಭರವಸೆ ಇರುವುದರಿಂದಲೇ ಇದನ್ನು ಹೇಳುತ್ತಿದ್ದೇವೆ.</verse>
				<verse number="5">ನಮ್ಮ ಸ್ವಂತ ಶಕ್ತಿಯಿಂದಲೇ ಏನನ್ನೋ ಸಾಧಿಸಿಬಿಟ್ಟಿದ್ದೇವೆ ಎಂದು ಹೇಳಿಕೊಳ್ಳುವ ಸಾಮರ್ಥ್ಯ ನಮಗಿಲ್ಲ. ನಮ್ಮ ಸಾಮರ್ಥ್ಯವೆಲ್ಲ ದೇವರಿಂದಲೇ ಬಂದುದು.</verse>
				<verse number="6">ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂಥ ಸಾಮರ್ಥ್ಯವನ್ನು ನೀಡಿದವರು ದೇವರೇ. ಈ ಒಡಂಬಡಿಕೆ ಲಿಖಿತ ಶಾಸನಕ್ಕೆ ಸಂಬಂಧಿಸಿದ್ದಲ್ಲ, ಪವಿತ್ರಾತ್ಮರಿಗೆ ಸಂಬಂಧಿಸಿದ್ದು. ಲಿಖಿತವಾದುದು ಮೃತ್ಯುಕಾರಕವಾದುದು; ಪವಿತ್ರಾತ್ಮ ಸಂಬಂಧವಾದುದು ಸಜ್ಜೀವದಾಯಕವಾದುದು.</verse>
				<verse number="7">ಕಲ್ಲಿನ ಮೇಲೆ ಕೊರೆಯಲಾದ ಶಾಸನ ಪ್ರಕಟವಾದಾಗ ದೇವರ ಮಹಿಮೆ ಕಾಣಿಸಿಕೊಂಡಿತು. ಆಗ ಮೋಶೆಯ ಮುಖವನ್ನು ಆವರಿಸಿದ್ದ ಪ್ರಭೆ ಕುಂದಿಹೋಗುವಂಥದ್ದಾಗಿದ್ದರೂ ಆ ಪ್ರಭೆಯಿಂದಾಗಿ ಆತನ ಮುಖವನ್ನು ದಿಟ್ಟಿಸಿನೋಡಲು ಇಸ್ರಯೇಲರಿಗೆ ಆಗಲಿಲ್ಲ.</verse>
				<verse number="8">ಮೃತ್ಯುಕಾರಕವಾದ ಈ ಶಾಸನ ಅಷ್ಟು ಮಹಿಮೆಯಿಂದ ಕೂಡಿತ್ತಾದರೆ ಪವಿತ್ರಾತ್ಮ ಚೈತನ್ಯದಿಂದ ಕೂಡಿದ ಸೇವೆಯು ಇನ್ನೆಷ್ಟು ಮಹಿಮೆಯಿಂದ ಕೂಡಿರಬೇಕು?</verse>
				<verse number="9">ದಂಡನೆಗೆ ಗುರಿಮಾಡುವ ಈ ಶಾಸನ ಸೇವೆ ಇಷ್ಟು ಮಹಿಮೆಯಿಂದ ಕೂಡಿದ್ದಾದರೆ, ಸದ್ಧರ್ಮಿಗಳೆಂದು ನಿರ್ಣಯಿಸುವ ಸೇವೆ ಇನ್ನೆಷ್ಟು ಮಹಿಮೆಯಿಂದ ಕೂಡಿರಬೇಕು?</verse>
				<verse number="10">ಈ ಸೇವೆಯ ಅಪರಿಮಿತ ಮಹಿಮೆಯ ಮುಂದೆ ಹಿಂದಿನ ಶಾಸನದ ಮಹಿಮೆ ಇಲ್ಲದಂತಾಗಿದೆ.</verse>
				<verse number="11">ಅಳಿದು ಹೋಗುವಂಥದ್ದೇ, ಅಷ್ಟು ಮಹಿಮೆಯಿಂದ ಕೂಡಿತ್ತಾದರೆ, ಶಾಶ್ವತವಾಗಿ ಉಳಿಯುವಂಥದ್ದು ಮತ್ತೆಷ್ಟು ಮಹಿಮೆಯಿಂದ ಕೂಡಿರಬೇಕು?</verse>
				<verse number="12">ನಮಗೆ ಇಂಥ ಭರವಸೆ ಇರುವುದರಿಂದಲೇ ನಾವು ಇಷ್ಟು ಧೈರ್ಯದಿಂದ ಇದ್ದೇವೆ.</verse>
				<verse number="13">ಕುಂದಿಹೋಗುವಂಥ ಮಹಿಮೆಯು ನಂದಿಹೋಗುವುದನ್ನು ಇಸ್ರಯೇಲರು ಕಾಣದಂತೆ ಮೋಶೆಯು ತನ್ನ ಮುಖಕ್ಕೆ ಮುಸುಕುಹಾಕಿಕೊಳ್ಳುತ್ತಿದ್ದನು. ನಾವು ಆತನಂತೆ ಅಲ್ಲ.</verse>
				<verse number="14">ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಇಂದಿನವರೆಗೂ ಹಳೆಯ ಒಡಂಬಡಿಕೆಯನ್ನು ಓದುವಾಗಲೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತಯೇಸುವಿನ ಮುಖಾಂತರವೇ ತೆಗೆಯಲು ಸಾಧ್ಯ.</verse>
				<verse number="15">ಹೌದು, ಮೋಶೆ ಬರೆದುದನ್ನು ಓದುವಾಗಲೆಲ್ಲಾ ಅವರ ಮನಸ್ಸು ಇಂದಿಗೂ ಅದೇ ಮುಸುಕಿನಿಂದ ಮುಚ್ಚಿದೆ.</verse>
				<verse number="16">‘ಪ್ರಭುವಿಗೆ ಅಭಿಮುಖರಾದಾಗ ಮಾತ್ರ ಆ ಮುಸುಕನ್ನು ತೆಗೆಯಲಾಗುತ್ತದೆ.’</verse>
				<verse number="17">ಈ ವಾಕ್ಯದಲ್ಲಿ, ‘ಪ್ರಭು’ ಎಂದರೆ ದೇವರ ಆತ್ಮವೇ. ಪ್ರಭುವಿನ ಆತ್ಮ ಎಲ್ಲಿದೆಯೋ ಅಲ್ಲಿ ವಿಮೋಚನೆಯೂ ಇದೆ.</verse>
				<verse number="18">ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.</verse>
			</chapter>
			<chapter number="4">
				<verse number="1">ದೇವರ ಕರುಣೆಯಿಂದ ಈ ಸೇವೆಯನ್ನು ಕೈಗೊಂಡಿರುವ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.</verse>
				<verse number="2">ಲಜ್ಜೆಗೆಟ್ಟ ಗುಪ್ತಕಾರ್ಯಗಳಿಂದ ನಾವು ದೂರವಿದ್ದೇವೆ. ನಮ್ಮ ನಡತೆಯಲ್ಲಿ ಮೋಸ, ವಂಚನೆ ಎಂಬುದಿಲ್ಲ. ದೇವರ ವಾಕ್ಯವನ್ನು ನಾವು ಅಪಾರ್ಥಗೊಳಿಸುವುದಿಲ್ಲ. ಬದಲಿಗೆ ಸತ್ಯವನ್ನು ಪ್ರಾಮಾಣಿಕವಾಗಿ ಸಾರುತ್ತೇವೆ. ಹೀಗೆ ದೇವರ ಸಮ್ಮುಖದಲ್ಲಿ ಸಜ್ಜನರಾದವರಿಗೆ ಸಾಕ್ಷಿಗಳಾಗಿದ್ದೇವೆ.</verse>
				<verse number="3">ನಾವು ಪ್ರಚಾರಮಾಡುವ ಶುಭಸಂದೇಶ ಕೆಲವರಿಗೆ ಇನ್ನೂ ಮುಸುಕಿನ ಮರೆಯಾಗಿದ್ದರೆ, ಹಾಗಿರುವುದು ವಿನಾಶ ಮಾರ್ಗದಲ್ಲಿರುವವರಿಗೆ ಮಾತ್ರ.</verse>
				<verse number="4">ಇವರು ವಿಶ್ವಾಸಿಸುವುದಿಲ್ಲ. ಏಕೆಂದರೆ, ಪೃಥ್ವಿಯ ಮಿಥ್ಯ ದೈವವು ಇವರ ಮನಸ್ಸನ್ನು ಮಂಕಾಗಿಸಿದೆ; ದೇವರ ಪ್ರತಿರೂಪವಾಗಿರುವ ಕ್ರಿಸ್ತಯೇಸುವಿನ ಮಹಿಮೆಯನ್ನು ಸಾರುವ ಶುಭಸಂದೇಶದ ಬೆಳಕನ್ನು ಕಾಣದಂತೆ ಇವರನ್ನು ಕುರುಡಾಗಿಸಿದೆ.</verse>
				<verse number="5">ನಾವು ನಮ್ಮನ್ನೇ ಕುರಿತು ಪ್ರಚಾರಮಾಡುತ್ತಿಲ್ಲ. ಆದರೆ ಕ್ರಿಸ್ತಯೇಸುವೇ ಪ್ರಭುವೆಂದೂ ಅವರಿಗೋಸ್ಕರ ನಾವು ನಿಮ್ಮ ದಾಸರೆಂದೂ ಪ್ರಚುರಪಡಿಸುತ್ತಿದ್ದೇವೆ.</verse>
				<verse number="6">“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.</verse>
				<verse number="7">ನಾವು ಇಂಥ ಆಧ್ಯಾತ್ಮಿಕ ಮಾಣಿಕ್ಯವನ್ನು ಪಡೆದಿದ್ದರೂ ಮಣ್ಣಿನ ಮಡಕೆಗಳಂತೆ ಇದ್ದೇವೆ. ಹೀಗೆ, ಈ ಪರಮೋನ್ನತ ಶಕ್ತಿ ನಮಗೆ ಸೇರಿದ್ದಲ್ಲ. ದೇವರಿಗೆ ಸೇರಿದ್ದೆಂದು ವ್ಯಕ್ತವಾಗುತ್ತದೆ.</verse>
				<verse number="8">ನಾವು ಇಕ್ಕಟ್ಟುಬಿಕ್ಕಟ್ಟುಗಳಿಗೆ ಒಳಗಾಗಿದ್ದರೂ ನಜ್ಜುಗುಜ್ಜಾಗಲಿಲ್ಲ; ಸಂಶಯ ಸಂದೇಹಗಳಿಗೊಳಗಾದರೂ ನಿರಾಶೆಗೊಳ್ಳಲಿಲ್ಲ.</verse>
				<verse number="9">ಶತ್ರುಗಳು ಅನೇಕರಿದ್ದರೂ ಮಿತ್ರನೊಬ್ಬನು ಇಲ್ಲದಿರಲಿಲ್ಲ. ಪ್ರಾಣ ಹಿಂಸೆಗಳಿಗೀಡಾಗಿದ್ದರೂ ಪ್ರಾಣನಷ್ಟವನ್ನು ಅನುಭವಿಸಲಿಲ್ಲ.</verse>
				<verse number="10">ಯೇಸುವಿನ ದಿವ್ಯಜೀವವು ನಮ್ಮ ದೇಹದಲ್ಲಿ ಗೋಚರವಾಗುವಂತೆ ಅವರ ಮರಣಯಾತನೆಯನ್ನು ನಿರಂತರವಾಗಿ ಅನುಭವಿಸುತ್ತಾ ಬಾಳುತ್ತಿದ್ದೇವೆ.</verse>
				<verse number="11">ಯೇಸುವಿನ ಅಮರ ಜೀವವು ನಮ್ಮ ನಶ್ವರ ಶರೀರದಲ್ಲಿ ಗೋಚರವಾಗುವಂತೆ ಬದುಕಿರುವಾಗಲೇ ನಾವು ಯೇಸುವಿಗೋಸ್ಕರ ಸತತ ಸಾವಿಗೆ ಈಡಾಗಿದ್ದೇವೆ.</verse>
				<verse number="12">ಹೀಗೆ ನಮ್ಮಲ್ಲಿ ಸಾವು ಕಾರ್ಯಗತವಾಗುತ್ತಿದ್ದರೆ ನಿಮ್ಮಲ್ಲಿ ಜೀವ ಕಾರ್ಯಗತವಾಗುತ್ತಿದೆ.</verse>
				<verse number="13">“ನಾನು ವಿಶ್ವಾಸವಿಟ್ಟೆನು. ಆದ್ದರಿಂದ ಮಾತನಾಡಿದೆನು,” ಎಂದು ಪವಿತ್ರಗ್ರಂಥದಲ್ಲಿ ಬರೆಯಲಾಗಿದೆ. ಇದೇ ಮನೋಭಾವನೆಯಿಂದ ಕೂಡಿರುವ ನಾವು ಮಾತನಾಡಲೇಬೇಕು. ಏಕೆಂದರೆ ನಮಗೆ ವಿಶ್ವಾಸವಿದೆ.</verse>
				<verse number="14">ಪ್ರಭು ಯೇಸುವನ್ನು ಪುನರುತ್ಥಾನಗೊಳಿಸಿದ ದೇವರು ನಮ್ಮನ್ನು ಯೇಸುಕ್ರಿಸ್ತರೊಡನೆ ಪುನರುತ್ಥಾನಗೊಳಿಸಿ ತಮ್ಮ ಸಾನ್ನಿಧ್ಯಕ್ಕೆ ಬರಮಾಡಿಕೊಳ್ಳುವರು ಎಂಬುದನ್ನು ನಾವು ಬಲ್ಲೆವು. ಅಂತೆಯೇ ನಿಮ್ಮನ್ನೂ ಬರಮಾಡಿಕೊಳ್ಳುವರು.</verse>
				<verse number="15">ಇದೆಲ್ಲವೂ ನಿಮ್ಮ ಒಳಿತಿಗಾಗಿಯೇ. ಹೀಗೆ ಅನೇಕರಲ್ಲಿ ದೇವರ ವರಪ್ರಸಾದವು ಉಕ್ಕಿ ಹರಿಯುವುದು; ಅವರಲ್ಲಿ ಕೃತಜ್ಞತಾಭಾವನೆಯನ್ನು ಹೆಚ್ಚಿಸುವುದು; ಇದರಿಂದಾಗಿ ದೇವರ ಮಹಿಮೆ ಬೆಳಗುವುದು.</verse>
				<verse number="16">ಹೀಗಿರಲು, ನಾವು ಎದೆಗುಂದುವುದಿಲ್ಲ. ನಮ್ಮ ಭೌತಿಕ ದೇಹವು ನಶಿಸುತ್ತಿದ್ದರೂ ನಮ್ಮ ಅಂತರಂಗವು ದಿನೇದಿನೇ ನೂತನವಾಗುತ್ತದೆ.</verse>
				<verse number="17">ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಅಲ್ಪವಾದುವು, ಕ್ಷಣಿಕವಾದುವು. ಅವುಗಳಿಂದ ಲಭಿಸುವ ಮಹಿಮೆಯಾದರೋ ಅಪಾರವಾದುದು, ಅನಂತವಾದುದು.</verse>
				<verse number="18">ನಮ್ಮ ಗಮನವು ಕೇಂದ್ರೀಕೃತವಾಗಿರುವುದು ಗೋಚರವಾದುವುಗಳ ಮೇಲಲ್ಲ, ಅಗೋಚರವಾದುವುಗಳ ಮೇಲೆ. ಗೋಚರವಾದುವುಗಳು ತಾತ್ಕಾಲಿಕ; ಅಗೋಚರವಾದುವುಗಳು ಶಾಶ್ವತ.</verse>
			</chapter>
			<chapter number="5">
				<verse number="1">ಭೂಮಿಯ ಮೇಲಿನ ನಮ್ಮ ಈ ದೇಹ ಎಂಬ ಗುಡಾರವು ನಾಶವಾಗಿಹೋದರೂ ಸ್ವರ್ಗದಲ್ಲಿ ಶಾಶ್ವತವಾದ ಗೃಹವೊಂದು ನಮಗೆ ದೊರಕುವುದು. ಅದು ಮಾನವರಿಂದ ನಿರ್ಮಿತ ಆದುದಲ್ಲ, ದೇವರಿಂದಲೇ ನಿರ್ಮಿತವಾದುದು. ಇದು ನಮಗೆ ತಿಳಿದ ವಿಷಯ.</verse>
				<verse number="2">ಈ ಗುಡಾರದಲ್ಲಿರುವವರೆಗೆ ನಾವು ನರಳುತ್ತೇವೆ; ಸ್ವರ್ಗೀಯ ನಿವಾಸವನ್ನು ನಮ್ಮ ದೇಹದ ಮೇಲೆ ಎಂದಿಗೆ ನಾವು ಧರಿಸಿಕೊಳ್ಳುತ್ತೇವೋ ಎಂದು ಹಾತೊರೆಯುತ್ತೇವೆ.</verse>
				<verse number="3">ಅದನ್ನು ಧರಿಸಿಕೊಂಡಾಗ ನಾವು ಬೆತ್ತಲೆಯಾಗಿ ಇರಲಾರೆವು.</verse>
				<verse number="4">ನಾವು ಈ ದೇಹವೆಂಬ ಗುಡಾರದಲ್ಲಿರುವ ತನಕ ನರಳುತ್ತೇವೆ, ಭಾರದಿಂದ ಬಳಲುತ್ತೇವೆ. ಈ ದೇಹವು ಕಳಚಿಹೋಗಬೇಕೆಂಬುದು ನಮ್ಮ ಬಯಕೆ ಅಲ್ಲ. ನಶ್ವರವಾದುದು ನುಂಗಿಹೋಗಿ ಅಮರವಾದುದು ಉಳಿಯಬೇಕೆಂದೇ ಈ ಗು಼ಡಾರದ ಮೇಲೆ ಆ ನಿವಾಸವನ್ನು ಧರಿಸಿಕೊಳ್ಳಲು ಅಪೇಕ್ಷಿಸುತ್ತೇವೆ.</verse>
				<verse number="5">ಈ ಸುಸ್ಥಿತಿಗಾಗಿಯೇ ದೇವರು ನಮ್ಮನ್ನು ಸಿದ್ಧಗೊಳಿಸಿದ್ದಾರೆ. ಇದಕ್ಕೆಲ್ಲಾ ಖಾತರಿಯಾಗಿ ಪವಿತ್ರಾತ್ಮರನ್ನೇ ನಮಗೆ ದಯಪಾಲಿಸಿದ್ದಾರೆ.</verse>
				<verse number="6">ಈ ಕಾರಣದಿಂದಲೇ ನಾವು ಸದಾ ಸ್ಥಿರಚಿತ್ತರಾಗಿದ್ದೇವೆ. ಈ ದೇಹವನ್ನೇ ನೆಚ್ಚಿ ಇದರಲ್ಲೇ ನೆಲೆಯಾಗಿರುವವರೆಗೂ ನಾವು ಪ್ರಭುವಿನಿಂದ ದೂರವಿರುವ ಪ್ರವಾಸಿಗಳಂತೆ ಇದ್ದೇವೆ.</verse>
				<verse number="7">ನಾವು ನೋಡಿ ನಡೆಯುವವರಲ್ಲ, ನಂಬಿ ನಡೆಯುವವರು.</verse>
				<verse number="8">ಆದ್ದರಿಂದ ಈ ದೇಹವನ್ನು ತ್ಯಜಿಸಿ, ಪ್ರಭುವನ್ನೇ ನೆಚ್ಚಿ ನೆಲಸುವುದು ಲೇಸೆಂದು ಧೈರ್ಯದಿಂದ ಹೇಳುತ್ತೇವೆ.</verse>
				<verse number="9">ಈ ಕಾರಣ, ಇಲ್ಲಾದರೂ ಸರಿ, ಅಲ್ಲಾದರೂ ಸರಿ, ಪ್ರಭು ಮೆಚ್ಚುವಂತೆ ಬಾಳುವುದೊಂದೇ ನಮ್ಮ ಗುರಿ.</verse>
				<verse number="10">ನಾವು ಎಲ್ಲರೂ ನ್ಯಾಯವಿಚಾರಣೆಗಾಗಿ ಕ್ರಿಸ್ತಯೇಸುವಿನ ಮುಂದೆ ನಿಲ್ಲಲೇಬೇಕು. ಪ್ರತಿಯೊಬ್ಬನೂ ತನ್ನ ದೈಹಿಕ ಜೀವನದಲ್ಲಿ ಮಾಡಿದ ಪಾಪ ಪುಣ್ಯಕಾರ್ಯಗಳಿಗೆ ತಕ್ಕ ಪ್ರತಿಫಲವನ್ನು ಪಡೆಯಲೇಬೇಕು.</verse>
				<verse number="11">ಪ್ರಭುವಿನ ಭಯಭಕ್ತಿ ನಮಗಿರುವುದರಿಂದ ನಾವು ಮಾನವರ ಮನವೊಲಿಸಲು ಪ್ರಯತ್ನಿಸುತ್ತೇವೆ. ನಾವು ಎಂಥವರೆಂದು ದೇವರು ಚೆನ್ನಾಗಿ ಬಲ್ಲರು. ಅದು ನಿಮ್ಮ ಮನಸ್ಸಾಕ್ಷಿಗೂ ಅರಿವಾಗಿದೆಯೆಂದು ನಂಬುತ್ತೇವೆ.</verse>
				<verse number="12">ಮತ್ತೊಮ್ಮೆ ನಮ್ಮನ್ನು ನಾವೇ ಹೊಗಳಿಕೊಳ್ಳುತ್ತೇವೆಂದು ನೀವು ಭಾವಿಸಬಾರದು. ನಮ್ಮನ್ನು ಕುರಿತು ನೀವೇ ಹೆಚ್ಚಳಪಡುವಂತೆ ಒಂದು ಅವಕಾಶವನ್ನು ಒದಗಿಸುತ್ತಿದ್ದೇವೆ, ಅಷ್ಟೆ. ಹೀಗೆ, ಮನುಷ್ಯನ ಅಂತರಂಗವನ್ನು ಅರಿಯದೆ ಅವನ ಹೊರ ತೋರಿಕೆಗಳನ್ನೇ ನೆಚ್ಚಿ ನಲಿಯುವವರಿಗೆ ಸೂಕ್ತ ಪ್ರತ್ಯುತ್ತರವನ್ನು ಕೊಡಲು ನೀವು ಶಕ್ತರಾಗುತ್ತೀರಿ.</verse>
				<verse number="13">ನಮಗೆ ಬುದ್ಧಿಭ್ರಮಣೆಯಾಗಿದೆಯೆಂದು ಭಾವಿಸುತ್ತೀರೋ? ಹಾಗಿದ್ದರೆ ಅದು ದೇವರ ಮಹಿಮೆಗಾಗಿ ನಾವು ಸ್ವಸ್ಥಬುದ್ಧಿಯುಳ್ಳವರೆಂದು ನೆನೆಸುತ್ತೀರೋ? ಹಾಗಿದ್ದರೆ ಅದು ನಿಮ್ಮ ಹಿತಕ್ಕಾಗಿ.</verse>
				<verse number="14">ಯೇಸುಕ್ರಿಸ್ತರ ಪ್ರೀತಿಯ ಪಾಲನೆಗೆ ನಾವು ಒಳಗಾಗಿದ್ದೇವೆ. ಎಲ್ಲಾ ಮಾನವರಿಗೋಸ್ಕರ ಒಬ್ಬನು ಮರಣಹೊಂದಿದನು. ಆದ್ದರಿಂದ ನಾವೆಲ್ಲರೂ ಆ ಮರಣದಲ್ಲಿ ಪಾಲುಗಾರರು.</verse>
				<verse number="15">ಸರ್ವರಿಗಾಗಿ ಯೇಸು ಪ್ರಾಣತ್ಯಾಗ ಮಾಡಿದರು. ಪರಿಣಾಮವಾಗಿ, ಇನ್ನು ಮುಂದೆ ಜೀವಿಸುವವರು ತಮಗಾಗಿ ಜೀವಿಸದೆ, ಸತ್ತು ಪುನರುತ್ಥಾನರಾದ ಯೇಸುವಿಗಾಗಿ ಜೀವಿಸಬೇಕು.</verse>
				<verse number="16">ಇನ್ನು ಮುಂದೆ ನಾವು ಯಾರನ್ನೂ ಕೇವಲ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಂದು ಕಾಲದಲ್ಲಿ, ಕ್ರಿಸ್ತಯೇಸುವನ್ನು ನಾವು ಹಾಗೆ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.</verse>
				<verse number="17">ಯಾರಾದರೂ ಯೇಸುಕ್ರಿಸ್ತರೊಡನೆ ಒಂದಾದರೆ ಅವನು ನೂತನ ಸೃಷ್ಟಿಯಾಗುತ್ತಾನೆ. ಹಳೆಯದೆಲ್ಲಾ ಅಳಿದುಹೋಗುತ್ತದೆ. ಹೊಸದಿದೋ, ಜನ್ಮತಳೆದಿದೆ.</verse>
				<verse number="18">ಇದೆಲ್ಲಾ ಆಗುವುದು ದೇವರಿಂದ. ದೇವರು ಕ್ರಿಸ್ತಯೇಸುವಿನ ಮುಖಾಂತರ ನಮ್ಮನ್ನು ತಮ್ಮೊಡನೆ ಸಂಧಾನಪಡಿಸಿಕೊಂಡಿದ್ದಾರೆ.ಇದಲ್ಲದೆ, ಇತರರನ್ನು ಸಂಧಾನಕ್ಕೆ ತರುವ ಕಾರ್ಯವನ್ನು ನಮಗೆ ವಹಿಸಿದ್ದಾರೆ.</verse>
				<verse number="19">ಹೌದು, ದೇವರು ಮಾನವರ ಅಪರಾಧಗಳನ್ನು ಲೆಕ್ಕಿಸದೆ, ಕ್ರಿಸ್ತಯೇಸುವಿನಲ್ಲಿ ಇಡೀ ಜಗತ್ತನ್ನೇ ತಮ್ಮೊಡನೆ ಸಂಧಾನಗೊಳಿಸುತ್ತಿದ್ದಾರೆ. ಈ ಸಂಧಾನದ ಸಂದೇಶವನ್ನು ಸಾರುವ ಸೌಭಾಗ್ಯವನ್ನು ಅವರೇ ನಮಗೆ ಕೊಟ್ಟಿದ್ದಾರೆ.</verse>
				<verse number="20">ಆದ್ದರಿಂದಲೇ ನಾವು ಕ್ರಿಸ್ತಯೇಸುವಿನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆ ನೀಡುತ್ತಿದ್ದಾರೆ. ಅವರೊಡನೆ ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತ್ತೇವೆ.</verse>
				<verse number="21">ಪಾಪವನ್ನೇ ಅರಿಯದ ಕ್ರಿಸ್ತಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತಯೇಸುವಿನಲ್ಲಿ ನಾವು ದೇವರೊಡನೆ ಸತ್ಸಂಬಂಧವನ್ನು ಪಡೆಯಲೆಂದೇ ಹೀಗೆ ಮಾಡಿದರು.</verse>
			</chapter>
			<chapter number="6">
				<verse number="1">ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೇನೆಂದರೆ: ದೇವರಿಂದ ನೀವು ಪಡೆದ ವರಪ್ರಸಾದಗಳನ್ನು ವ್ಯರ್ಥಮಾಡಬೇಡಿ.</verse>
				<verse number="2">:ಸುಪ್ರಸನ್ನತೆಯ ಕಾಲದಲ್ಲಿ ನಿನ್ನನ್ನಾಲಿಸಿದೆನು; ಉದ್ಧಾರ ದಿನದಂದು ನಿನಗೆ ನೆರವಾದೆನು,” ಎಂದಿದ್ದಾರೆ ದೇವರು. ಇದೇ ಆ ಸುಪ್ರಸನ್ನತೆಯ ಕಾಲ. ಇದೇ ಆ ಉದ್ಧಾರದ ಸುದಿನ.</verse>
				<verse number="3">ನಮ್ಮ ಸೇವಾಕಾರ್ಯವು ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಯಾವ ತೆರನಾದ ಅಡ್ಡಿಯನ್ನೂ ಒಡ್ಡಲಿಲ್ಲ.</verse>
				<verse number="4">ಬದಲಿಗೆ, ಎಲ್ಲ ವಿಷಯಗಳಲ್ಲೂ ದೇವರ ದಾಸರೆಂದು ತೋರಿಸಿಕೊಳ್ಳುತ್ತೇವೆ. ಕಷ್ಟಸಂಕಟಗಳಲ್ಲೂ ದುಃಖದುರಿತಗಳಲ್ಲೂ ತಾಳ್ಮೆಯಿಂದ ವರ್ತಿಸಿದ್ದೇವೆ.</verse>
				<verse number="5">ಏಟುಪೆಟ್ಟುಗಳನ್ನು ತಿಂದಿದ್ದೇವೆ, ಸೆರೆಮನೆವಾಸ ಅನುಭವಿಸಿದ್ದೇವೆ, ಕೋಪಕ್ರಾಂತಿಗಳಿಗೆ ಗುರಿಯಾಗಿದ್ದೇವೆ, ಮೈಮುರಿಯೆ ದುಡಿದಿದ್ದೇವೆ, ನಿದ್ದೆಗೆಟ್ಟು ಬಳಲಿದ್ದೇವೆ, ಊಟವಿಲ್ಲದೆ ಸೊರಗಿದ್ದೇವೆ.</verse>
				<verse number="6">ನಿರ್ಮಲ ಮನಸ್ಸು, ಸನ್ಮತಿ, ಸಹನೆ, ಸದಯತೆಯಿಂದಲೂ, ಪವಿತ್ರಾತ್ಮ, ನಿಷ್ಕಪಟ ಪ್ರೇಮ,</verse>
				<verse number="7">ಸತ್ಯೋಕ್ತಿ, ದೈವಶಕ್ತಿ, ಇವುಗಳಿಂದಲೂ ನಾವು ದೇವರ ದಾಸರೆಂದು ತೋರ್ಪಡಿಸುತ್ತೇವೆ. ರಕ್ಷಿಸಲೂ ಎದುರಿಸಲೂ ಧರ್ಮವೆಂಬ ಆಯುಧವನ್ನು ಕೈಯಲ್ಲಿ ಹಿಡಿದಿದ್ದೇವೆ.</verse>
				<verse number="8">ಮಾನ-ಅವಮಾನ, ಕೀರ್ತಿ-ಅಪಕೀರ್ತಿ ಎರಡನ್ನೂ ಅನುಭವಿಸುತ್ತಿದ್ದೇವೆ. ಸತ್ಯವಾದಿಗಳು ನಾವಾದರೂ ಮಿಥ್ಯವಾದಿಗಳು ಎಂದೆನಿಸಿಕೊಂಡಿದ್ದೇವೆ.</verse>
				<verse number="9">ಪ್ರಖ್ಯಾತರಾಗಿದ್ದರೂ ಖ್ಯಾತರಹಿತರಾಗಿದ್ದೇವೆ. ಬದುಕಿದ್ದರೂ ಸತ್ತವರೆನಿಸಿಕೊಂಡಿದ್ದೇವೆ. ಶಿಕ್ಷೆಗೆ ಗುರಿಯಾಗಿದ್ದರೂ ಇನ್ನೂ ಕೊಲೆಗೆ ಈಡಾಗದೆ ಇದ್ದೇವೆ.</verse>
				<verse number="10">ದುಃಖಪಡುತ್ತಿದ್ದರೂ ಸದಾ ಸಂತೋಷದಿಂದ ಇದ್ದೇವೆ. ದರಿದ್ರರಾಗಿದ್ದರೂ ಅನೇಕರನ್ನು ಧನವಂತರನ್ನಾಗಿಸುತ್ತಿದ್ದೇವೆ; ನಾವು ಏನೂ ಇಲ್ಲದವರಾಗಿದ್ದರೂ ಎಲ್ಲವನ್ನೂ ಪಡೆದವರಂತೆ ಇದ್ದೇವೆ.</verse>
				<verse number="11">ಕೊರಿಂಥದ ನಿವಾಸಿಗಳೇ, ಬಿಚ್ಚುಮನದಿಂದಲೂ ತೆರೆದ ಹೃದಯದಿಂದಲೂ ನಾವು ನಿಮ್ಮೊಡ಼ನೆ ಮಾತನಾಡಿದ್ದೇವೆ.</verse>
				<verse number="12">ನಮ್ಮಲ್ಲಿ ಸಂಕುಚಿತ ಭಾವನೆಯೇನೂ ಇಲ್ಲ. ಇದು ಇರುವುದಾದರೆ ನಿಮ್ಮಲ್ಲೇ.</verse>
				<verse number="13">ಆದ್ದರಿಂದ ಮಕ್ಕಳಿಗೆ ಹೇಳುವಂತೆ ಹೇಳುತ್ತಿದ್ದೇವೆ: ನಾವು ನಿಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿದಂತೆ, ನೀವೂ ನಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿರಿ.</verse>
				<verse number="14">ಅವಿಶ್ವಾಸಿಗಳೊಡನೆ ಒಂದಾಗಬೇಡಿ. ಧರ್ಮಕ್ಕೂ ಅಧರ್ಮಕ್ಕೂ ಸಾಟಿಯೆಲ್ಲಿ? ಬೆಳಕಿಗೂ ಕತ್ತಲೆಗೂ ಎಲ್ಲಿಯ ಸಂಬಂಧ?</verse>
				<verse number="15">ಕ್ರಿಸ್ತಯೇಸುವಿಗೂ ಸೈತಾನನಿಗೂ ಎಲ್ಲಿಯ ನಂಟು? ವಿಶ್ವಾಸಿಗೂ ಅವಿಶ್ವಾಸಿಗೂ ಎಲ್ಲಿಯ ಸಹವಾಸ?</verse>
				<verse number="16">ದೇವರ ಆಲಯಕ್ಕೂ ಕಲ್ಲಿನ ವಿಗ್ರಹಕ್ಕೂ ಎಲ್ಲಿಯ ಸಾಮ್ಯ? ನಾವಾದರೋ ಜೀವಂತ ದೇವರ ಮಂದಿರವಾಗಿದ್ದೇವೆ. ಇದನ್ನು ದೇವರೇ ಹೇಳಿದ್ದಾರೆ: “ನನ್ನ ಜನರಲ್ಲೇ ನಾ ಮನೆಮಾಡುವೆನು ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು ಅವರೆನಗೆ ಪ್ರಜೆಯಾಗಿರುವರು.”</verse>
				<verse number="17">ಇದಲ್ಲದೆ: ಅನ್ಯಜನರನ್ನು ಬಿಟ್ಟು ಹೊರಬನ್ನಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ.</verse>
				<verse number="18">ಅಕ್ಕರೆಯಿಂದ ನಾನಾಗ ನಿಮ್ಮನ್ನು ಸ್ವಾಗತಿಸುವೆನು ತಂದೆಯಾಗಿರುವೆನು ನಾನು ನಿಮಗೆ ಪುತ್ರಪುತ್ರಿಯರಾಗಿರುವಿರಿ ನೀವು ನನಗೆ.” - ಎಂದು ನುಡಿದಿಹರು ಸರ್ವಶಕ್ತ ಪ್ರಭು.</verse>
			</chapter>
			<chapter number="7">
				<verse number="1">ಪ್ರಿಯ ಸಹೋದರರೇ, ಇಂಥ ವಾಗ್ದಾನಗಳನ್ನು ಪಡೆದಿರುವ ನಾವು ಎಲ್ಲಾ ವಿಧವಾದ ಮಲಿನತೆಯಿಂದ ದೂರವಿದ್ದು ದೇಹಾತ್ಮಗಳಲ್ಲಿ ಶುದ್ಧರಾಗಿರೋಣ. ದೇವರಲ್ಲಿ ಭಯಭಕ್ತಿಯುಳ್ಳವರಾಗಿ ಪರಿಶುದ್ಧತೆಯಲ್ಲಿ ಪರಿಣತಿಯನ್ನು ಪಡೆಯೋಣ.</verse>
				<verse number="2">ನಿಮ್ಮ ಹೃದಯಗಳಲ್ಲಿ ನಮಗೆ ಸ್ಥಳವಿರಲಿ. ನಾವು ಯಾರಿಗೂ ಅನ್ಯಾಯಮಾಡಿಲ್ಲ, ಯಾರಿಗೂ ಕೇಡನ್ನು ಬಗೆದಿಲ್ಲ, ಯಾರನ್ನೂ ವಂಚಿಸಲಿಲ್ಲ.</verse>
				<verse number="3">ನಿಮ್ಮನ್ನು ನಿಂದಿಸುವುದಕ್ಕಾಗಿ ಇದನ್ನು ನಾನು ಹೇಳುತ್ತಿಲ್ಲ; ಈ ಮೊದಲೇ ನಿಮಗೆ ತಿಳಿಸಿರುವಂತೆ, ‘ಸತ್ತರೂ ಒಂದಾಗಿ ಸಾಯುತ್ತೇವೆ, ಬದುಕಿದರೂ ಒಂದಾಗಿ ಬದುಕುತ್ತೇವೆ,” ಎನ್ನುವಷ್ಟರ ಮಟ್ಟಿಗೆ ನೀವು ನನ್ನ ಹೃದಯದಲ್ಲಿದ್ದೀರಿ.</verse>
				<verse number="4">ನಿಮ್ಮಲ್ಲಿ ನನಗೆ ದೃಢವಾದ ಭರವಸೆಯುಂಟು. ಗಾಢವಾದ ಅಭಿಮಾನವುಂಟು. ನಮ್ಮೆಲ್ಲಾ ಸಂಕಟಗಳಲ್ಲೂ ನಾನು ಎದೆಗುಂದದೆ ಆನಂದಭರಿತನಾಗಿದ್ದೇನೆ.</verse>
				<verse number="5">ನಾವು ಮಕೆದೋನಿಯವನ್ನು ತಲುಪಿದ ಮೇಲೂ ದೇಹಕ್ಕೆ ಕಿಂಚಿತ್ತಾದರೂ ವಿಶ್ರಾಂತಿ ಸಿಗಲಿಲ್ಲ. ಎಲ್ಲಾ ಕಡೆಗಳಿಂದಲೂ ನಮಗೆ ತೊಂದರೆ ತಾಪತ್ರಯಗಳು ಬಂದುವು. ಹೊರಗೆ ಕಲಹ, ಒಳಗೆ ತಳಮಳ;</verse>
				<verse number="6">ಆದರೂ ಎದೆಗುಂದಿದವರನ್ನು ಸಂತೈಸುವ ದೇವರು ತೀತನನ್ನು ಕಳುಹಿಸಿ ನಮ್ಮನ್ನು ಸಂತೈಸಿದರು.</verse>
				<verse number="7">ತೀತನ ಆಗಮನದಿಂದ ಮಾತ್ರವಲ್ಲ, ನೀವು ಆತನಿಗೆ ತೋರಿದ ಪ್ರೀತ್ಯಾದರದ ವರದಿಯಿಂದಲೂ ನಾವು ಪುನಃ ಚೇತನಗೊಂಡೆವು. ನನ್ನನ್ನು ನೋಡಲು ನಿಮಗಿರುವ ಹಂಬಲ, ನನ್ನ ಮೇಲೆ ನಿಮಗಿರುವ ಅನುಕಂಪ, ನನ್ನ ಬಗ್ಗೆ ನಿಮಗಿರುವ ಹಿತಚಿಂತನೆ, ಇವುಗಳನ್ನು ಕೇಳಿ ನಮಗೆ ಮತ್ತಷ್ಟು ಆನಂದವಾಯಿತು.</verse>
				<verse number="8">ನಾನು ಬರೆದ ಪತ್ರದಿಂದ ನಿಮ್ಮ ಮನಸ್ಸಿಗೆ ನೋವಾಗಿರಬಹುದು. ಆದರೂ ಚಿಂತೆಯಿಲ್ಲ. ಆ ಪತ್ರವು ನಿಮ್ಮನ್ನು ಸ್ವಲ್ಪಕಾಲ ದುಃಖಕ್ಕೀಡುಮಾಡಿತೆಂದು ನಾನು ಮೊದಮೊದಲು ನೊಂದುಕೊಂಡೆನಾದರೂ ಈಗ ಸಂತೋಷಪಡುತ್ತೇನೆ.</verse>
				<verse number="9">ನಿಮಗೆ ದುಃಖ ಉಂಟಾಯಿತೆಂಬ ಕಾರಣದಿಂದ ಅಲ್ಲ, ಆ ದುಃಖದಿಂದ ನಿಮಗೆ ಮನಪರಿವರ್ತನೆ ಆಯಿತೆಂಬ ಕಾರಣದಿಂದ ಸಂತೋಷಪಡುತ್ತೇನೆ. ನಿಮಗೆ ದುಃಖ ಉಂಟಾದುದು ದೇವರ ಚಿತ್ತವೇ ಸರಿ. ಆದರೆ ನನ್ನಿಂದ ನಿಮಗೆ ಅನ್ಯಾಯವೇನೂ ಆಗಲಿಲ್ಲ.</verse>
				<verse number="10">ದೇವರ ಚಿತ್ತಾನುಸಾರ ಬಂದೊದಗುವ ದುಃಖವು ಹೃದಯ ಪರಿವರ್ತನೆಗೆ ಕಾರಣವಾಗುತ್ತದೆ; ಜೀವೋದ್ಧಾರಕ್ಕೆ ಎಡೆಮಾಡುತ್ತದೆ. ಕೇವಲ ಪ್ರಾಪಂಚಿಕವಾದ ದುಃಖವು ಸಾವಿಗೆ ಒಯ್ಯುತ್ತದೆ;</verse>
				<verse number="11">ದೇವರ ಚಿತ್ತಾನುಸಾರವಾದ ನಿಮ್ಮ ದುಃಖದಿಂದ ಎಂಥಾ ಶ್ರದ್ಧೆ ಉಂಟಾಗಿದೆ ಎಂಬುದನ್ನು ಗಮನಿಸಿನೋಡಿರಿ; ನಿಮ್ಮಲ್ಲಿ ಎಂಥ ಉತ್ಸಾಹ, ದೋಷವಿಮುಕ್ತರಾಗಲು ಎಂಥ ಪ್ರಯಾಸ, ಎಷ್ಟು ರೋಷ, ಎಷ್ಟು ಆವೇಶ, ಎಷ್ಟು ಎಚ್ಚರಿಕೆ, ಎಷ್ಟು ಹಂಬಲ, ತಪ್ಪಿತಸ್ಥರನ್ನು ಶಿಕ್ಷಿಸಲು ಎಷ್ಟು ಕಟ್ಟುನಿಟ್ಟು! ನೀವು ನಿರ್ದೋಷಿಗಳೆಂಬುದಕ್ಕೆ ಇವೆಲ್ಲವೂ ಸಾದೃಶ್ಯಗಳಾಗಿವೆ.</verse>
				<verse number="12">ನಾನು ನಿಮಗೆ ಆ ಪತ್ರವನ್ನು ಬರೆದದ್ದು ತಪ್ಪುಮಾಡಿದವನಿಗೆ ದಂಡನೆಯಾಗಲಿ ಎಂದಲ್ಲ, ಆ ತಪ್ಪಿನಿಂದ ನೊಂದವನಿಗೆ ನ್ಯಾಯ ದೊರಕಲೆಂದೂ ಅಲ್ಲ; ನಮ್ಮ ಬಗ್ಗೆ ನಿಮಗಿರುವ ಅಕ್ಕರೆ-ಆಸಕ್ತಿಗಳು ದೇವರ ಸನ್ನಿಧಿಯಲ್ಲಿ ನಿಮಗೆ ವ್ಯಕ್ತವಾಗಲೆಂದೇ ಬರೆದೆನು. ಆದ್ದರಿಂದಲೇ ನಮ್ಮ ಮನಸ್ಸಿಗೆ ನೆಮ್ಮದಿ ಉಂಟಾಗಿದೆ.</verse>
				<verse number="13">ಅಷ್ಟೇ ಅಲ್ಲ, ನೀವೆಲ್ಲರೂ ತೀತನ ಮನಸ್ಸನ್ನು ತಣಿಸಿದ್ದರಿಂದ ಆತನ ಸಂತೋಷವನ್ನು ಕಂಡು ನಾವು ಮತ್ತಷ್ಟು ತೃಪ್ತರಾಗಿದ್ದೇವೆ.</verse>
				<verse number="14">ತೀತನ ಮುಂದೆ ನಾನು ನಿಮ್ಮನ್ನು ಹೊಗಳಿದ್ದು ನಿಜ; ಹಾಗೆ ಹೊಗಳಿದ್ದಕ್ಕಾಗಿ ನಾನು ನಾಚಿಕೆಪಡಬೇಕಾಗಿಲ್ಲ. ನಾವು ನಿಮಗೆ ಹೇಳಿದ್ದೆಲ್ಲವೂ ಹೇಗೆ ಸತ್ಯವಾಗಿತ್ತೋ, ಹಾಗೆಯೇ ತೀತನ ಮುಂದೆ ನಾವು ಆಡಿದ ಹೊಗಳಿಕೆಯ ಮಾತುಗಳೆಲ್ಲವೂ ಸತ್ಯವಾಗಿವೆ.</verse>
				<verse number="15">ನಿಮ್ಮೆಲ್ಲರ ವಿನಯ-ವಿಧೇಯತೆಯನ್ನು, ಭಯಭಕ್ತಿಯಿಂದ ನೀವು ನೀಡಿದ ಸ್ವಾಗತವನ್ನು ಸ್ಮರಿಸಿಕೊಳ್ಳುವಾಗಲೆಲ್ಲ ನಿಮ್ಮ ಮೇಲೆ ಆತನಿಗಿರುವ ಪ್ರೀತಿ ಉಕ್ಕಿ ಹರಿಯುತ್ತದೆ.</verse>
				<verse number="16">ನಿಮ್ಮ ಮೇಲೆ ನನಗೆ ಪೂರ್ಣಭರವಸೆ ಇದೆ. ಇದೇ ನನ್ನ ಸಂತೋಷ.</verse>
			</chapter>
			<chapter number="8">
				<verse number="1">ಸಹೋದರರೇ, ಮಕೆದೋನಿಯ ಸಭೆಗಳಿಗೆ ದೇವರು ದಯಪಾಲಿಸಿದ ಕೃಪಾತಿಶಯಗಳನ್ನು ನಾನು ನಿಮಗೆ ತಿಳಿಸ ಬಯಸುತ್ತೇನೆ.</verse>
				<verse number="2">ಈ ಸಭೆಗಳವರು ಕಷ್ಟಸಂಕಟಗಳ ಕುಲುಮೆಯಲ್ಲಿ ಬೆಂದಿದ್ದರೂ ಹರ್ಷಭರಿತರಾಗಿದ್ದಾರೆ. ಕಡುಬಡತನದಲ್ಲಿ ನರಳುತ್ತಿದ್ದರೂ ಅಪಾರ ಔದಾರ್ಯದಿಂದ ನಡೆದುಕೊಳ್ಳುತ್ತಿದ್ದಾರೆ.</verse>
				<verse number="3">ತಮ್ಮ ಶಕ್ತಿಗನುಸಾರವಾಗಿ ಮಾತ್ರವಲ್ಲ, ಕೆಲವೊಮ್ಮೆ ಶಕ್ತಿಮೀರಿಯೂ ನೀಡಿದ್ದಾರೆಂದು ನಾನು ಖಂಡಿತವಾಗಿ ಹೇಳುತ್ತೇನೆ.</verse>
				<verse number="4">ದೇವಜನರಿಗೆ ನೆರವಾಗುವ ಸೌಭಾಗ್ಯದಲ್ಲಿ ತಾವೂ ಭಾಗಿಗಳಾಗಬೇಕಂದು, ಸ್ವಂತ ಇಷ್ಟದಿಂದ ನಮ್ಮನ್ನು ಅವರು ಬಹುವಾಗಿ ಬೇಡಿಕೊಂಡರು.</verse>
				<verse number="5">ಇದನ್ನು, ನಾವು ನಿರೀಕ್ಷಿಸಲೇ ಇಲ್ಲ! ಮೊಟ್ಟಮೊದಲು ಅವರು ತಮ್ಮನ್ನೇ ಪ್ರಭುವಿಗೆ ಸಮರ್ಪಿಸಿದರು. ಅನಂತರ ದೈವಚಿತ್ತಕ್ಕೆ ಅನುಗುಣವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.</verse>
				<verse number="6">ಇಂಥ ಪ್ರೀತಿಮಯ ಸೇವಾಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ತೀತನು ಅದನ್ನು ಮುಂದುವರಿಸಿ, ಪೂರ್ಣಗೊಳಿಸಬೇಕೆಂದು ನಾವು ಆತನನ್ನು ಕೇಳಿಕೊಂಡಿದ್ದೇವೆ.</verse>
				<verse number="7">ವಿಶ್ವಾಸ, ವಾಕ್ಚಾತುರ್ಯ, ಜ್ಞಾನ, ಶ್ರದ್ಧೆ, ನಮ್ಮ ಬಗ್ಗೆ ನಿಮಗಿರುವ ಪ್ರೀತಿ - ಈ ಎಲ್ಲಾ ವಿಷಯಗಳಲ್ಲೂ ನೀವು ಸಮೃದ್ಧರಾಗಿದ್ದೀರಿ. ಹಾಗೆಯೇ ಈ ಸೇವಾಕಾರ್ಯದಲ್ಲೂ ಸಮೃದ್ಧರಾಗಿರಿ.</verse>
				<verse number="8">ಇದನ್ನು ನಾನು ಆಜ್ಞಾರೂಪವಾಗಿ ಹೇಳುತ್ತಿಲ್ಲ. ಬೇರೆಯವರಿಗೆ ಈ ಸೇವಾಕಾರ್ಯದಲ್ಲಿ ಇರುವ ಶ್ರದ್ಧೆಯನ್ನು ಆದರ್ಶವಾಗಿ ಹಿಡಿದು ನಿಮ್ಮ ಪ್ರೀತಿ ಎಷ್ಟು ಯಥಾರ್ಥವಾದುದೆಂದು ಕಂಡುಕೊಳ್ಳುವುದಕ್ಕಾಗಿ ಇದನ್ನು ಹೇಳುತ್ತಿದ್ದೇನೆ.</verse>
				<verse number="9">ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.</verse>
				<verse number="10">ಈ ವಿಷಯದಲ್ಲಿ ನನ್ನ ಸಲಹೆ ಏನೆಂದರೆ: ಒಂದು ವರ್ಷಕ್ಕೆ ಹಿಂದೆ ನೀವು ಪ್ರಾರಂಭಿಸಿದ ಈ ಸೇವಾಕಾರ್ಯವನ್ನು ಪೂರೈಸುವುದು ಲೇಸು. ಈ ಕಾರ್ಯವನ್ನು ಮೊದಲು ಆರಂಭಿಸಿದವರು ನೀವೇ. ಆರಂಭಿಸಬೇಕೆಂದು ಸೂಚಿಸಿದವರೂ ನೀವೇ.</verse>
				<verse number="11">ಆದ್ದರಿಂದ ಆರಂಭಿಸುವುದರಲ್ಲಿ ಎಷ್ಟು ಆಸಕ್ತರಾಗಿದ್ದಿರೋ, ಅಷ್ಟೇ ಆಸಕ್ತಿಯಿಂದ ನಿಮ್ಮ ನಿಮ್ಮ ಶಕ್ತಿಗನುಸಾರವಾಗಿ ನೀಡಿ ಈ ಯೋಜನೆಯನ್ನು ಪೂರೈಸಿರಿ.</verse>
				<verse number="12">ಒಬ್ಬನು ಕೊಡುವುದಕ್ಕೆ ಮನಸ್ಸುಳ್ಳವನಾಗಿದ್ದರೆ, ಅವನು ತನ್ನಲ್ಲಿ ಇರುವುದಕ್ಕೆ ತಕ್ಕಂತೆ ಕೊಟ್ಟರೆ ಸಾಕು. ನಿಮ್ಮಲ್ಲಿ ಇಲ್ಲದ್ದನ್ನು ದೇವರು ಬಯಸುವುದಿಲ್ಲ.</verse>
				<verse number="13">ನಿಮ್ಮ ಕೊಡುಗೆಯಿಂದ ಇತರರ ಕಷ್ಟ ಪರಿಹಾರವಾಗಬೇಕು; ಅದರಿಂದ ನಿಮಗೆ ನಷ್ಟವುಂಟಾಗಬೇಕು ಎಂದು ಸಮಾನತೆ ಇರಬೇಕು.</verse>
				<verse number="14">ಈ ಕಾಲದಲ್ಲಿ ನಿಮಗೆ ಸಮೃದ್ಧಿಯಾಗಿರುವುದರಿಂದ ಅವರ ಕೊರತೆಯನ್ನು ನೀವು ನೀಗಿಸಬೇಕು. ಮುಂದಕ್ಕೆ ಅವರು ಸಮೃದ್ಧಿಯಿಂದಿರುವಾಗ, ನಿಮ್ಮ ಕೊರತೆಯನ್ನು ಅವರು ನೀಗಿಸುವರು. ಹೀಗೆ ನಿಮ್ಮಲ್ಲಿ ಸಮಾನತೆ ಉಂಟಾಗುವುದು.</verse>
				<verse number="15">:ಅತಿಯಾಗಿ ಶೇಖರಿಸಿದವನಿಗೆ ಅಧಿಕವಾಗಲಿಲ್ಲ ಮಿತಿಯಾಗಿ ಶೇಖರಿಸಿದವನಿಗೆ ಕೊರತೆಯಾಗಲಿಲ್ಲ.” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.</verse>
				<verse number="16">ನಿಮ್ಮ ಮೇಲೆ ನನಗಿರುವ ಅದೇ ಅಕ್ಕರೆಯನ್ನು ತೀತನಲ್ಲೂ ಮೂಡಿಸಿದ ದೇವರಿಗೆ ಕೃತಜ್ಞತೆ ಸಲ್ಲಬೇಕು.</verse>
				<verse number="17">ನಿಮ್ಮ ಬಳಿಗೆ ಹೋಗಬೇಕೆಂದು ಕೇಳಿಕೊಂಡಾಗ ಆತನು ಕೂಡಲೇ ಸಮ್ಮತಿಸಿದನು. ಅಷ್ಟೇ ಅಲ್ಲ, ನಿಮಗೆ ನೆರವಾಗಲು, ನಿಮ್ಮ ಬಳಿಗೆ ಬರಲು ಆತನೇ ಸ್ವಂತ ಇಷ್ಟದಿಂದ ಹೊರಟಿದ್ದಾನೆ.</verse>
				<verse number="18">ಆತನ ಸಂಗಡ ಇನ್ನೊಬ್ಬ ಸಹೋದರನನ್ನು ಕಳುಹಿಸುತ್ತಿದ್ದೇವೆ. ಈತನು ಶುಭಸಂದೇಶವನ್ನು ಸಾರುವುದರಲ್ಲಿ ಎಲ್ಲ ಸಭೆಗಳಿಂದ ಪ್ರಶಂಸೆ ಪಡೆದಿದ್ದಾನೆ.</verse>
				<verse number="19">ಇದಷ್ಟೇ ಅಲ್ಲದೆ, ಪ್ರಭುವಿನ ಮಹಿಮೆ ಬೆಳಗುವಂತೆಯೂ ಇತರರಿಗೆ ನೆರವಾಗಬೇಕೆಂಬ ಸದುದ್ದೇಶದಿಂದಲೂ ನಾವು ಕೈಗೊಂಡಿರುವ ಸೇವಾಕಾರ್ಯದಲ್ಲಿ ನಮ್ಮ ಸಂಗಡ ಪ್ರಯಾಣಮಾಡಲೆಂದು ಸಭೆಯವರು ಈತನನ್ನು ನೇಮಕಮಾಡಿದ್ದಾರೆ.</verse>
				<verse number="20">ನಮ್ಮ ವಶಕ್ಕೆ ಒಪ್ಪಿಸಲಾಗಿರುವ ಈ ಉದಾರ ಕೊಡುಗೆಯ ವಿತರಣೆಯಲ್ಲಿ ಯಾರೂ ನಮ್ಮ ಮೇಲೆ ತಪ್ಪುಹೊರಿಸಲು ಆಸ್ಪದವಿರಕೂಡದು.</verse>
				<verse number="21">ಪ್ರಭುವಿನ ದೃಷ್ಟಿಯಲ್ಲಿ ಮಾತ್ರವಲ್ಲ.ಮಾನವರ ದೃಷ್ಟಿಯಲ್ಲೂ ಯೋಗ್ಯವಾದುದನ್ನು ಮಾಡುವುದೇ ನಮ್ಮ ಉದ್ದೇಶ.</verse>
				<verse number="22">ಇವರಿಬ್ಬರ ಸಂಗಡ ಮತ್ತೊಬ್ಬ ಸಹೋದರನನ್ನೂ ಕಳುಹಿಸುತ್ತಿದ್ದೇವೆ. ಈತನು ಆಸಕ್ತಿ ಉಳ್ಳವನೆಂದು ಅನುಭವದಿಂದ ಕಂಡುಕೊಂಡಿದ್ದೇವೆ. ನಿಮ್ಮಲ್ಲಿ ಪೂರ್ಣ ಭರವಸೆಯಿಟ್ಟು ನಿಮಗೆ ನೆರವಾಗಲು ಆತನು ಹೆಚ್ಚು ಉತ್ಸುಕನಾಗಿದ್ದಾನೆ.</verse>
				<verse number="23">ತೀತನ ವಿಷಯವಾಗಿ ಹೇಳುವುದಾದರೆ, ಆತನು ನನ್ನ ಸಹೋದ್ಯೋಗಿ; ನಿಮ್ಮ ಸೇವೆಯಲ್ಲಿ ನನ್ನ ಸಹಕಾರಿ, ಆತನ ಸಂಗಡ ಬರುತ್ತಿರುವ ಇತರ ಸಹೋದರರು ಸಭೆಗಳ ಪ್ರತಿನಿಧಿಗಳು. ಕ್ರಿಸ್ತಯೇಸುವಿನ ಮಹಿಮೆಯನ್ನು ಬೆಳಗುವಂಥವರು ಅವರು.</verse>
				<verse number="24">ಆದ್ದರಿಂದ ಇವರನ್ನು ಪ್ರೀತಿಯಿಂದ ನೋಡಿಕೊಳ್ಳಿ. ನಾವು ನಿಮ್ಮನ್ನು ಹೊಗಳಿದ್ದಕ್ಕೆ ತಕ್ಕಂತೆ ನಡೆದುಕೊಂಡು ಸಭೆಗಳಿಗೆ ನಿಮ್ಮ ಯೋಗ್ಯತೆಯನ್ನು ಮನದಟ್ಟುಮಾಡಿಕೊಡಿರಿ.</verse>
			</chapter>
			<chapter number="9">
				<verse number="1">ದೇವಜನರಿಗೆ ಸಲ್ಲಿಸಬೇಕಾದ ಈ ಸೇವಾಕಾರ್ಯವನ್ನು ಕುರಿತು ನಾನು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.</verse>
				<verse number="2">ನೆರವು ನೀಡಲು ಸಿದ್ಧರಿದ್ದೀರೆಂದು ನನಗೆ ಚೆನ್ನಾಗಿ ಗೊತ್ತಿದೆ. “ಅಖಾಯದ ಸಹೋದರರು ಕಳೆದ ವರ್ಷದಿಂದಲೂ ನೆರವು ನೀಡಲು ಏರ್ಪಾಡುಮಾಡುತ್ತಿರುವರು,” ಎಂದು ಮಕೆದೋನಿಯರ ಮುಂದೆ ನಾನು ನಿಮ್ಮನ್ನು ಹೊಗಳಿದ್ದೇನೆ. ನಿಮ್ಮ ಉತ್ಸಾಹ ಅವರಲ್ಲಿ ಅನೇಕರನ್ನು ಹುರಿದುಂಬಿಸಿದೆ.</verse>
				<verse number="3">ಆದರೂ ನಮ್ಮ ಹೊಗಳಿಕೆ ಸುಳ್ಳಾಗಬಾರದೆಂದು ನಾನು ಈ ಸಹೋದರರನ್ನು ಮುಂಚಿತವಾಗಿ ಕಳುಹಿಸುತ್ತಿದ್ದೇನೆ.</verse>
				<verse number="4">ನಾನು ನಿಮಗೆ ಹೇಳಿರುವಂತೆ ನಿಮ್ಮ ಏರ್ಪಾಡೆಲ್ಲಾ ಮುಗಿದಿರಬೇಕು. ಇಲ್ಲದಿದ್ದರೆ ನಾನು ಬರುವಾಗ, ನನ್ನ ಜೊತೆಯಲ್ಲಿಯೇ ಮಕೆದೋನಿಯದ ಸಹೋದರರೂ ಬಂದು, ನೀವು ಸಿದ್ಧರಿಲ್ಲದೆ ಇರುವುದನ್ನು ಕಂಡರೆ ನೀವು ತಲೆತಗ್ಗಿಸಬೇಕಾಗುತ್ತದೆ. ನಿಮ್ಮಲ್ಲಿ ನಂಬಿಕೆ ಇಟ್ಟದ್ದಕ್ಕಾಗಿ ನಾನೂ ತಲೆ ತಗ್ಗಿಸಬೇಕಾಗುತ್ತದೆ.</verse>
				<verse number="5">ಆದ್ದರಿಂದಲೇ, ನೀವು ವಾಗ್ದಾನಮಾಡಿದ ಕೊಡುಗೆಯನ್ನು ಸಂಗ್ರಹಿಸುವ ಏರ್ಪಾಡನ್ನು ಮಾಡುವಂತೆ ಈ ಸಹೋದರರನ್ನು ನಮಗೆ ಮುಂಚಿತವಾಗಿಯೇ ನಿಮ್ಮ ಬಳಿಗೆ ಕಳುಹಿಸುವುದು ಉಚಿತವೆಂದು ನನಗೆ ತೋಚಿತು. ಹೀಗೆ ಈ ಕೊಡುಗೆ ಬಲಾತ್ಕಾರವಾದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ನಿಧಿ ಆಗಿರುತ್ತದೆ.</verse>
				<verse number="6">ವಿರಳವಾಗಿ ಬಿತ್ತುವವನು ವಿರಳವಾಗಿ ಕೊಯ್ಯುತ್ತಾನೆ ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ</verse>
				<verse number="7">ಪ್ರತಿಯೊಬ್ಬನೂ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಷ್ಟು ನೀಡಲಿ. ಒಲ್ಲದ ಮನಸ್ಸಿನಿಂದಾಗಲಿ ಬಲಾತ್ಕಾರದಿಂದಾಗಲಿ ಕೊಡುವುದು ಬೇಡ. ನಗುನಗುತ್ತಾ ನೀಡುವಾತನನ್ನು ದೇವರು ಪ್ರೀತಿಸುತ್ತಾರೆ.</verse>
				<verse number="8">ಸಕಲ ವಿಧವಾದ ವರದಾನಗಳನ್ನು ನಿಮಗೆ ಯಥೇಚ್ಛವಾಗಿ ನೀಡಬಲ್ಲ ಶಕ್ತಿ ದೇವರಿಗಿದೆ. ನೀವು ಸದಾ ಸಮೃದ್ಧಿಯಿಂದಿರುವಿರಿ. ಹೀಗೆ ಸಕಲ ಸತ್ಕಾರ್ಯಗಳಿಗೆ ಹೃತ್ಪೂರ್ವಕವಾಗಿ ನೆರವಾಗುವಿರಿ.</verse>
				<verse number="9">“ದೀನದಲಿತರಿಗೆ ಧಾರಾಳವಾಗಿ ನೀಡುವನು; ಅನವರತ ಇರುವುದು ಅವನ ದಾನಧರ್ಮದ ಫಲವು,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.</verse>
				<verse number="10">ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ಊಟವನ್ನೂ ಒದಗಿಸುವ ದೇವರು, ಬಿತ್ತನೆಗೆ ಬೇಕಾದ ಬೀಜವನ್ನು ನಿಮಗೂ ಕೊಟ್ಟು ಅದನ್ನು ಬೆಳೆಸುವರು. ನಿಮ್ಮ ದಾನಧರ್ಮದ ಫಲಗಳು ಸಮೃದ್ಧಿಗೊಳ್ಳುವಂತೆ ಮಾಡುವರು.</verse>
				<verse number="11">ನೀವು ಸದಾ ಉದಾರಿಗಳಾಗಿರುವಂತೆ ನಿಮ್ಮನ್ನು ಎಲ್ಲಾ ವಿಧದಲ್ಲೂ ಸಿರಿವಂತರನ್ನಾಗಿ ಮಾಡುವರು. ನಿಮ್ಮ ಕೊಡುಗೆ ನಮ್ಮ ಸೇವೆಯ ಮೂಲಕ ಬೇರೆಯವರಿಗೆ ತಲುಪಿ, ಅವರು ದೇವರನ್ನು ಕೃತಜ್ಞತೆಯಿಂದ ಸ್ಮರಿಸುವಂತೆ ಮಾಡುವುದು.</verse>
				<verse number="12">ಹೀಗೆ ನಿಮ್ಮ ಕೊಡುಗೆ ದೇವಜನರ ಕೊರತೆಗಳನ್ನು ನೀಗಿಸುವುದಲ್ಲದೆ ಅನೇಕರು ದೇವರಿಗೆ ಸ್ತೋತ್ರ ಸಲ್ಲಿಸುವಂತೆ ಮಾಡುವುದು.</verse>
				<verse number="13">ಕ್ರಿಸ್ತಯೇಸುವಿನ ಶುಭಸಂದೇಶದ ಅಂಗೀಕಾರದಿಂದ ನೀವು ಎಷ್ಟು ನಿಷ್ಠಾವಂತ ಸೇವಾಸಕ್ತರಾಗಿದ್ದೀರಿ, ತಮಗೂ ಇತರರಿಗೂ ಎಷ್ಟು ಉದಾರಿಗಳಾಗಿದ್ದೀರಿ ಎಂದು ತಿಳಿದು ಅನೇಕರು ದೇವರನ್ನು ಕೊಂಡಾಡುವರು.</verse>
				<verse number="14">ದೇವರು ನಿಮಗೆ ಅನುಗ್ರಹಿಸಿರುವ ಅತಿಶಯವಾದ ವರಕ್ಕಾಗಿ ಅವರು ಪ್ರೀತಿವಾತ್ಸಲ್ಯದಿಂದ ನಿಮಗೋಸ್ಕರ ಪ್ರಾರ್ಥಿಸುವರು.</verse>
				<verse number="15">ವರ್ಣಿಸಲು ಅಸಾಧ್ಯವಾದ ದೇವರ ಕೃಪಾವರಕ್ಕಾಗಿ ಅವರಿಗೆ ಸ್ತುತಿಸ್ತೋತ್ರ ಸಲ್ಲಲಿ!</verse>
			</chapter>
			<chapter number="10">
				<verse number="1">“ಪೌಲನು ನಮ್ಮ ಹತ್ತಿರವಿರುವಾಗ ಮೆದುವಾಗಿಯೂ ದೂರವಿರುವಾಗ ಕಠಿಣನಾಗಿಯೂ ವರ್ತಿಸುತ್ತಾನೆ,” ಎಂದು ನಿಮ್ಮಲ್ಲಿ ಕೆಲವರು ಮಾತನಾಡಿಕೊಳ್ಳುವುದು ನನಗೆ ತಿಳಿದುಬಂದಿದೆ. ವಿನಯಶೀಲರೂ ದೀನದಯಾಳುವೂ ಆದ ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾನು ಕೇಳಿಕೊಳ್ಳುವುದೇನೆಂದರೆ:</verse>
				<verse number="2">ನಾನು ನಿಮ್ಮ ಬಳಿಗೆ ಬಂದಾಗ, ಕಠಿಣನಾಗಿ ವರ್ತಿಸಲು ಅವಕಾಶ ಕೊಡಬೇಡಿ. ನಾವು ಪ್ರಾಪಂಚಿಕ ರೀತಿನೀತಿಗಳಿಗೆ ಅನುಗುಣವಾಗಿ ನಡೆಯುತ್ತಿದ್ದೇವೆಂದು ದೂಷಿಸುವವರ ವಿರುದ್ಧ ಖಂಡಿತವಾಗಿಯೂ ಕಠಿಣನಾಗಿಯೇ ವರ್ತಿಸಬೇಕೆಂದಿದ್ದೇನೆ.</verse>
				<verse number="3">ನಾವು ಪ್ರಪಂಚದಲ್ಲಿ ಬಾಳುತ್ತಿದ್ದರೂ ನಮ್ಮ ಹೋರಾಟ ಪ್ರಾಪಂಚಿಕ ಉದ್ದೇಶದಿಂದ ಕೂಡಿದ್ದಲ್ಲ.</verse>
				<verse number="4">ನಾವು ಬಳಸುವ ಆಯುಧಗಳು ಮಾನವ ನಿರ್ಮಿತವಾದುವಲ್ಲ, ದೇವರ ಶಕ್ತಿಯಿಂದ ಕೂಡಿದುವು; ಕೋಟೆಕೊತ್ತಲಗಳನ್ನು ಕೆಡವಬಲ್ಲವು. ಅವುಗಳಿಂದ ನಾವು ಎಲ್ಲ ಕುತರ್ಕಗಳನ್ನು ನಿರ್ಮೂಲಮಾಡಬಲ್ಲೆವು.</verse>
				<verse number="5">ದೈವಜ್ಞಾನಕ್ಕೆ ವಿರುದ್ಧ ತಲೆ ಎತ್ತುವ ದುರ್ಗಗಳನ್ನು ಧ್ವಂಸಮಾಡಬಲ್ಲೆವು. ಮಾನವನ ಪ್ರತಿಯೊಂದು ಆಲೋಚನೆಗಳನ್ನೂ ಬಂಧಿಸಬಲ್ಲೆವು.</verse>
				<verse number="6">ನೀವು ಸಂಪೂರ್ಣರಾಗಿ ವಿಧೇಯರಾದ ಮೇಲೆ ಪ್ರತಿಯೊಂದು ಅವಿಧೇಯ ಕೃತ್ಯವನ್ನು ಶಿಕ್ಷಿಸಲು ನಾವು ಹಿಂಜರಿಯೆವು.</verse>
				<verse number="7">ನೀವು ಹೊರಗಿನ ತೋರಿಕೆಗಳನ್ನು ಗಮನಿಸುವಂತವರು. ಯಾರಾದರೂ ತಾನು ಕ್ರಿಸ್ತಯೇಸುವಿಗೆ ಸೇರಿದವನು ಎಂದು ದೃಢವಾಗಿ ನಂಬುವುದಾದರೆ, ಅವನು ಮತ್ತೆ ತನ್ನನ್ನೇ ಪರೀಕ್ಷಿಸಿ ನೋಡಲಿ. ಏಕೆಂದರೆ, ಅವನಂತೆಯೇ ನಾವೂ ಕ್ರಿಸ್ತಯೇಸುವಿಗೆ ಸೇರಿದವರು.</verse>
				<verse number="8">ಪ್ರಭು ನಮಗೆ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಕೆಡವಿ ಹಾಳುಮಾಡುವುದಕ್ಕಲ್ಲ, ಕಟ್ಟಿ ಎಬ್ಬಿಸುವುದಕ್ಕಾಗಿ. ಈ ಅಧಿಕಾರವನ್ನು ಕುರಿತು ಒಂದು ವೇಳೆ, ನಾವು ಕೊಂಚ ಹೆಚ್ಚಾಗಿ ಹೊಗಳಿಕೊಂಡಿದ್ದರೂ ಅದಕ್ಕಾಗಿ ಸಂಕೋಚಪಡುವುದಿಲ್ಲ.</verse>
				<verse number="9">ನಾನು ನನ್ನ ಪತ್ರಗಳ ಮೂಲಕ ನಿಮ್ಮನ್ನು ಬೆದರಿಸುತ್ತಿದ್ದೇನೆ ಎಂದು ಯಾರೂ ಭಾವಿಸಬಾರದು.</verse>
				<verse number="10">“ಪೌಲನ ಪತ್ರಗಳು ಪ್ರಬಲವಾದುವು, ತೀಕ್ಷ್ಣವಾದುವು; ಆದರೆ ಆತನು ಸ್ವತಃ ನಮ್ಮಲ್ಲಿಗೆ ಬಂದಾಗ ಆತನು ದುರ್ಬಲನು ಹಾಗೂ ಆತನ ಮಾತು ಸಹ ಕೆಲಸಕ್ಕೆ ಬಾರದವು,” ಎಂದು ಕೆಲವರು ಹೇಳುತ್ತಿದ್ದಾರಂತೆ.</verse>
				<verse number="11">ದೂರದಲ್ಲಿದ್ದಾಗ ಪತ್ರದ ಮೂಲಕ ನಾವು ಹೇಗೆ ಕಾಣಿಸಿಕೊಳ್ಳುತ್ತೇವೋ ಹಾಗೆಯೇ ಹತ್ತಿರ ಬಂದಾಗಲೂ ನಡೆದುಕೊಳ್ಳುತ್ತೇವೆ ಎಂಬುದನ್ನು ಆ ವ್ಯಕ್ತಿಗಳು ತಿಳಿದುಕೊಳ್ಳಲಿ.</verse>
				<verse number="12">ಕೆಲವರು ತಮ್ಮನ್ನು ತಾವೇ ಹೊಗಳಿಕೊಳ್ಳುತ್ತಾರೆ. ಅವರಂತೆ ಕೊಚ್ಚಿಕೊಳ್ಳುವುದಕ್ಕೂ ಅವರೊಡನೆ ಹೋಲಿಸಿಕೊಳ್ಳುವುದಕ್ಕೂ ನಾವು ಯತ್ನಿಸುವುದಿಲ್ಲ. ಅವರಿಗೆ ತಾವು ಹಾಕಿಕೊಂಡದ್ದೇ ಅಳತೆಗೋಲು. ತಮಗೆ ತಾವೇ ತಾಳೆಹಾಕಿಕೊಳ್ಳುವಂಥ ಅವಿವೇಕಿಗಳು.</verse>
				<verse number="13">ನಾವಾದರೋ ಹಾಗೆ ಮಿತಿಮೀರಿ ಹೊಗಳಿಕೊಳ್ಳುವುದಿಲ್ಲ. ನಮಗೆ ದೇವರು ತಾವೇ ನಿಯಮಿಸಿದ ಕಾರ್ಯಕ್ಷೇತ್ರದ ಸರಹದ್ದನ್ನು ನಾವು ಮೀರುವುದಿಲ್ಲ. ಈ ಸರಹದ್ದಿಗೆ ನೀವೂ ಒಳಪಟ್ಟಿದ್ದೀರಿ.</verse>
				<verse number="14">ಇತರರಿಗಿಂತಲೂ ಮೊದಲೇ ನಿಮಗೆ ಯೇಸುಕ್ರಿಸ್ತರ ಶುಭಸಂದೇಶವನ್ನು ತಂದವರು ನಾವು. ಹೀಗಿರುವಲ್ಲಿ ನಿಮ್ಮ ವಿಷಯದಲ್ಲಿ ನಾವು ಈಗ ಹೊಗಳಿಕೊಳ್ಳುವಾಗ ನಮ್ಮ ಸರಹದ್ದನ್ನು ಉಲ್ಲಂಘಿಸುತ್ತಿಲ್ಲ.</verse>
				<verse number="15">ಇತರರ ಪ್ರಯಾಸದ ಫಲಗಳನ್ನು ನಮ್ಮದೆಂದುಕೊಂಡು ಎಲ್ಲೆಮೀರಿ ನಾವು ಹೊಗಳಿಕೊಳ್ಳುತ್ತಿಲ್ಲ. ಆದರೆ ನಿಮ್ಮ ವಿಶ್ವಾಸ ವೃದ್ಧಿಯಾದಂತೆಲ್ಲಾ ನಮ್ಮ ಕಾರ್ಯಕ್ಷೇತ್ರ ಇನ್ನೂ ವಿಸ್ತಾರವಾಗಬೇಕು.</verse>
				<verse number="16">ಮತ್ತೊಬ್ಬರ ಕ್ಷೇತ್ರದ ಸೇವಾಫಲಗಳನ್ನು ನಮ್ಮದೆಂದು ಹೊಗಳಿಕೊಳ್ಳದೆ, ನಿಮ್ಮ ಗಡಿಯಾಚೆಯ ನಾಡುಗಳಲ್ಲೂ ಶುಭಸಂದೇಶವನ್ನು ಸಾರಬೇಕೆಂಬುದೇ ನಮ್ಮ ಆಶಯ.</verse>
				<verse number="17">“ಹೆಚ್ಚಳಪಡುವವನು ಪ್ರಭುವಿನಲ್ಲೇ ಹೆಚ್ಚಳಪಡಲಿ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.</verse>
				<verse number="18">ಅಂತೆಯೇ, ತನ್ನನ್ನು ತಾನೇ ಹೊಗಳಿಕೊಳ್ಳುವವನು ಅಲ್ಲ, ಪ್ರಭು ಯಾರನ್ನು ಹೊಗಳುತ್ತಾರೋ, ಅವನೇ ಧನ್ಯನು.</verse>
			</chapter>
			<chapter number="11">
				<verse number="1">ನನ್ನನ್ನು ನಾನೇ ಹೊಗಳಿಕೊಳ್ಳುವ ಹುಚ್ಚುತನವನ್ನು ನೀವು ಸ್ವಲ್ಪ ಸಹಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತೇನೆ.</verse>
				<verse number="2">ನಿಮ್ಮ ಬಗ್ಗೆ ದೇವರಿಗಿರುವ ಪ್ರೇಮಾಸೂಯೆ ನನಗೂ ಇದೆ. ನಿಷ್ಕಳಂಕ ಕನ್ನಿಕೆಯೊಬ್ಬಳನ್ನು ಅವಳ ಏಕೈಕ ವರನಿಗೆ ನಿಶ್ಚಯಿಸುವ ರೀತಿಯಲ್ಲಿ ನಾನು ಕ್ರಿಸ್ತಯೇಸುವೆಂಬ ಏಕೈಕ ಪುರುಷನಿಗೆ ನಿಮ್ಮನ್ನು ನಿಶ್ಚಯಮಾಡಿದ್ದೇನೆ.</verse>
				<verse number="3">ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.</verse>
				<verse number="4">ಏಕೆಂದರೆ, ಯಾರಾದರೂ ಬಂದು, ನಾವು ಬೋಧಿಸದೆ ಇರುವ ಬೇರೊಬ್ಬ ಯೇಸುವನ್ನು ಬೋಧಿಸಿದರೆ ನೀವು ಸ್ವೀಕರಿಸುತ್ತೀರಿ. ನೀವು ಹೊಂದಿರುವ ಪವಿತ್ರಾತ್ಮರಿಗೆ ಬದಲಾಗಿ ಬೇರೊಬ್ಬ ಆತ್ಮವನ್ನು ಪಡೆಯುವಂತೆ ಮಾಡಿದರೆ, ನೀವು ಸ್ವಾಗತಿಸುತ್ತೀರಿ. ನಿಮಗೆ ಈಗಾಗಲೇ ದೊರಕಿರುವ ಶುಭಸಂದೇಶವಲ್ಲದೆ ಬೇರೊಂದು ಸಂದೇಶವನ್ನು ನಿಮಗೆ ಸಾರಿದರೆ, ನೀವು ಒಮ್ಮೆಗೇ ಒಪ್ಪಿಕೊಳ್ಳುತ್ತೀರಿ. ಇದು ನಿಜಕ್ಕೂ ಆಶ್ಚರ್ಯವೇ ಸರಿ.</verse>
				<verse number="5">“ಮಹಾ ಪ್ರೇಷಿತರು” ಎನಿಸಿಕೊಳ್ಳುವ ಆ ಜನರಿಗಿಂತ ನಾನು ಯಾವುದರಲ್ಲೂ ಕಡಿಮೆಯಿಲ್ಲ.</verse>
				<verse number="6">ಮಾತಿನಲ್ಲಿ ಚತುರನಲ್ಲದಿದ್ದರೂ ಜ್ಞಾನದಲ್ಲಿ ಅಲ್ಪನಲ್ಲ. ಇದನ್ನು ನಿಮಗೆ ಎಲ್ಲಾ ಸಮಯಸಂದರ್ಭಗಳಲ್ಲೂ ಸ್ಪಷ್ಟಪಡಿಸಿದ್ದೇನೆ.</verse>
				<verse number="7">ನಿಮಗೆ ದೇವರ ಶುಭಸಂದೇಶವನ್ನು ಉಚಿತವಾಗಿಯೇ ಬೋಧಿಸಿದೆನು. ನಿಮ್ಮನ್ನು ಮೇಲಕ್ಕೇರಿಸಲು ನನ್ನನ್ನೇ ತಗ್ಗಸಿಕೊಂಡೆನು. ಹೀಗೆ ಮಾಡಿದ್ದು ತಪ್ಪಾಯಿತೇ?</verse>
				<verse number="8">ನಿಮಗೆ ಸೇವೆಮಾಡುವುದಕ್ಕೋಸ್ಕರ ನಾನು ಬೇರೆ ಸಭೆಗಳಿಂದ ನೆರವುಪಡೆಯುತ್ತಿದ್ದೆ, ನಿಮಗೋಸ್ಕರ ಇತರ ಸಭೆಗಳಿಂದ ಹಣ ವಸೂಲಿಮಾಡುತ್ತಿದ್ದೆ.</verse>
				<verse number="9">ನಾನು ನಿಮ್ಮೊಂದಿಗಿದ್ದಾಗ ನನಗೆ ಹಣದ ಕೊರತೆ ಇದ್ದರೂ ನಿಮ್ಮಲ್ಲಿ ಯಾರಿಗೂ ಹೊರೆಯಾಗಲಿಲ್ಲ. ಮಕೆದೋನಿಯದಿಂದ ಬಂದ ಸಹೋದರರು ನನ್ನ ಕೊರತೆಯನ್ನೆಲ್ಲಾ ನೀಗಿಸಿದರು. ನಿಮಗೆ ಯಾವುದರಲ್ಲೂ ಹೊರೆಯಾಗಬಾರದೆಂದು ಎಚ್ಚರಿಕೆ ವಹಿಸಿದ್ದೆ; ಇನ್ನು ಮುಂದಕ್ಕೂ ಎಚ್ಚರಿಕೆಯಿಂದ ಇರುತ್ತೇನೆ.</verse>
				<verse number="10">ಈ ನನ್ನ ಹೊಗಳಿಕೆಯನ್ನು ಅಖಾಯ ಪ್ರಾಂತ್ಯದ ಯಾರೂ ಅಡಗಿಸುವಂತಿಲ್ಲವೆಂದು ಕ್ರಿಸ್ತಯೇಸುವಿನ ಮುಂದೆ ಸತ್ಯವಾಗಿ ನುಡಿಯುತ್ತೇನೆ.</verse>
				<verse number="11">ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು ದೇವರೇ ಬಲ್ಲರು.</verse>
				<verse number="12">ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಮಾಡುತ್ತಿರುವ ಪ್ರೇಷಿತರ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಅವರಿಗೆ ಅಂಥ ಆಸ್ಪದವನ್ನು ಕೊಡದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ.</verse>
				<verse number="13">ಅವರು ಕಪಟ ಪ್ರೇಷಿತರು, ಕಳ್ಳ ಕೆಲಸಗಾರರು, ಕ್ರಿಸ್ತಯೇಸುವಿನ ಪ್ರೇಷಿತರಂತೆ ನಟಿಸುವವರು.</verse>
				<verse number="14">ಇದರಲ್ಲಿ ಆಶ್ಚರ್ಯವೇನೂ ಇಲ್ಲ. ಸೈತಾನನೂ ಸಹ ಜ್ಯೋತಿರ್ಮಯ ದೇವದೂತನಂತೆ ಕಾಣಿಸಿಕೊಳ್ಳಬಲ್ಲನು.</verse>
				<verse number="15">ಹೀಗಿರುವಲ್ಲಿ, ಅವನ ಸೇವಕರೂ ಸಹ ಸತ್ಯಸೇವಕರಂತೆ ವೇಷಧಾರಿಗಳಾದರೆ ಅದರಲ್ಲೇನು ಸೋಜಿಗ? ಅವರ ಕೃತ್ಯಗಳಂತೆಯೇ ಅವರ ಅಂತ್ಯವೂ ಇರುತ್ತದೆ.</verse>
				<verse number="16">ನನ್ನನ್ನು ಯಾರೂ ಹುಚ್ಚನೆಂದು ಭಾವಿಸದಿರಲಿ, ಎಂದು ಮತ್ತೆ ಹೇಳುತ್ತೇನೆ. ಒಂದು ವೇಳೆ ಹಾಗೆ ಭಾವಿಸಿದರೂ ಚಿಂತೆಯಿಲ್ಲ. ನನ್ನನ್ನು ಹುಚ್ಚನಾಗಿಯೇ ಸ್ವೀಕರಿಸಿ. ಆಗ ನಾನು ಆತ್ಮಪ್ರಶಂಸೆ ಮಾಡಿಕೊಳ್ಳಲು ಅಲ್ಪಸ್ವಲ್ಪವಾದರೂ ಆಸ್ಪದವಾಗುತ್ತದೆ.</verse>
				<verse number="17">ನಾನೀಗ ಹೇಳುತ್ತಿರುವುದು ಪ್ರಭುವಿನ ಪ್ರೇರಣೆಯಿಂದಲ್ಲ, ಧೈರ್ಯದಿಂದ ತನ್ನನ್ನೇ ಕೊಚ್ಚಿಕೊಳ್ಳುವ ಒಬ್ಬ ಹುಚ್ಚನಂತೆ ಹೇಳುತ್ತಿದ್ದೇನೆ:</verse>
				<verse number="18">ಅನೇಕರು ಕೇವಲ ಪ್ರಾಪಂಚಿಕ ವಿಷಯಗಳನ್ನು ಕುರಿತು ತಮ್ಮನ್ನೇ ಹೊಗಳಿಕೊಳ್ಳುತ್ತಾರೆ. ಹಾಗೆಯೇ ನಾನೂ ಹೊಗಳಿಕೊಳ್ಳುತ್ತೇನೆ.</verse>
				<verse number="19">ನೀವಾದರೋ ಮಹಾ ಬುದ್ಧಿವಂತರು! ಬುದ್ಧಿಹೀನರನ್ನು ಬಹಳವಾಗಿ ಸಹಿಸಿಕೊಳ್ಳುತ್ತೀರಿ.</verse>
				<verse number="20">ಯಾರಾದರೂ ನಿಮ್ಮನ್ನು ಅಧೀನಪಡಿಸಿಕೊಂಡರೂ ಕಬಳಿಸಿದರೂ ಮರುಳುಗೊಳಿಸಿದರೂ ತುಚ್ಛೀಕರಿಸಿದರೂ ಕೆನ್ನೆಗೆ ಬಿಗಿದರೂ ಎಲ್ಲವನ್ನೂ ಸಹಿಸಿಕೊಳ್ಳುತ್ತೀರಿ.</verse>
				<verse number="21">ಇದನ್ನೆಲ್ಲಾ ಮಾಡುವ ಸಾಹಸ ನಮಗಿಲ್ಲವೆಂದು ಹೇಳಿಕೊಳ್ಳಲು ನನಗೆ ನಾಚಿಕೆಯಾಗುತ್ತದೆ. ಯಾರಿಗಾದರೂ ಯಾರ ವಿಷಯದಲ್ಲಾದರೂ ಹೊಗಳಿಕೊಳ್ಳುವ ಧೈರ್ಯವಿದ್ದರೆ ಅದಕ್ಕಿಂತ ಹೆಚ್ಚಿನ ಧೈರ್ಯ ನನಗಿದೆ. ಇದನ್ನು ನಾನು ಹುಚ್ಚನಂತೆಯೇ ಹೇಳುತ್ತಿದ್ದೇನೆ ಎಂದು ಭಾವಿಸಿಕೊಳ್ಳಿ.</verse>
				<verse number="22">ಅವರು ಹಿಬ್ರಿಯರೋ? ನಾನೂ ಹಿಬ್ರಿಯನೇ. ಅವರು ಇಸ್ರಯೇಲರೋ? ನಾನೂ ಇಸ್ರಯೇಲನೇ. ಅವರು ಅಬ್ರಹಾಮನ ವಂಶದವರೋ? ನಾನೂ ಅದೆ ವಂಶದವನೇ.</verse>
				<verse number="23">ಅವರು ಕ್ರಿಸ್ತಯೇಸುವಿನ ದಾಸರೋ? (ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ) ಅವರಿಗಿಂತ ನಾನು ದಾಸಾನುದಾಸನು. ಅವರಿಗಿಂತ ಹೆಚ್ಚಾಗಿ ಸೇವೆಮಾಡಿದ್ದೇನೆ; ಅವರಿಗಿಂತ ಹೆಚ್ಚಾಗಿ ಸೆರೆಮನೆಗಳ ವಾಸವನ್ನು ಅನುಭವಿಸಿದ್ದೇನೆ; ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ; ಅನೇಕ ಸಲ ಸಾವಿನ ದವಡೆಗೆ ಸಿಲುಕಿಕೊಂಡಿದ್ದೇನೆ.</verse>
				<verse number="24">ಐದು ಸಾರಿ ಯೆಹೂದ್ಯರಿಂದ ನನಗೆ ನಲವತ್ತಕ್ಕೆ ಒಂದು ಕಡಿಮೆ ಚಾಟಿ ಏಟುಗಳು ಬಿದ್ದವು.</verse>
				<verse number="25">ಮೂರು ಸಾರಿ ರೋಮನರು ನನ್ನನ್ನು ಛಡಿಗಳಿಂದ ಹೊಡೆಸಿದರು. ಒಮ್ಮೆ ಜನರು ನನ್ನನ್ನು ಕೊಲ್ಲಲೆಂದು ಕಲ್ಲು ತೂರಿದರು. ಮೂರು ಸಲ ನಾನಿದ್ದ ಹಡಗು ಒಡೆದು ನೀರುಪಾಲಾಯಿತು. ಒಂದು ರಾತ್ರಿ, ಒಂದು ಹಗಲು ನಡುಗಡಲಲ್ಲಿ ತೇಲಾಡಿದೆ.</verse>
				<verse number="26">ಪ್ರಭುವಿನ ಸೇವೆಯಲ್ಲಿ ನಾನು ಕೈಗೊಂಡ ಪ್ರಯಾಣಗಳು ಅನೇಕ; ನನಗೆ ಬಂದೊದಗಿದ ಅಪಾಯಗಳೂ ಅನೇಕ; ಪ್ರವಾಹಗಳ ಅಪಾಯ, ಕಳ್ಳಕಾಕರ ಅಪಾಯ, ಸ್ವಜನ ಹಾಗೂ ಅನ್ಯಜನರಿಂದ ಅಪಾಯ, ನಗರಗಳ ಹಾಗೂ ನಿರ್ಜನ‍ಪ್ರದೇಶಗಳ ಅಪಾಯ, ಕಡಲುಗಳ ಅಪಾಯ, ಕಪಟ ಸಹೋದರರಿಂದ ಅಪಾಯ - ಇವೆಲ್ಲಕ್ಕೂ ತುತ್ತಾದೆ.</verse>
				<verse number="27">ಶ್ರಮಪಟ್ಟು ದುಡಿದಿದ್ದೇನೆ, ಎಷ್ಟೋ ಸಾರಿ ನಿದ್ದೆಗೆಟ್ಟಿದ್ದೇನೆ; ಹಸಿವು ನೀರಡಿಕೆಗಳಿಂದ ಬಳಲಿದ್ದೇನೆ; ಅನೇಕ ಸಾರಿ ಊಟಬಟ್ಟೆಯಿಲ್ಲದೆ ಅಲೆದಿದ್ದೇನೆ; ಚಳಿಗಾಳಿಯಲ್ಲಿ ನಡುಗಿದ್ದೇನೆ.</verse>
				<verse number="28">ಇಂಥ ಇನ್ನಿತರ ಕಷ್ಟಸಂಕಟಗಳನ್ನು ಅನುಭವಿಸಿದ್ದೇನೆ. ಅಷ್ಟೇ ಅಲ್ಲದೆ, ಎಲ್ಲ ಸಭೆಗಳ ಹಿತಚಿಂತನೆಯೂ ನನ್ನನ್ನು ಅನುದಿನವೂ ಕಾಡಿಸಿದೆ.</verse>
				<verse number="29">ಒಬ್ಬನು ಬಲಹೀನನಾಗಿದ್ದರೆ, ಅವನೊಡನೆ ನಾನೂ ಬಲಹೀನನೇ. ಒಬ್ಬನು ಪಾಪಕ್ಕೆ ಬಲಿಯಾದರೆ ನಾನೂ ತಾಪದಿಂದ ಕುದಿಯುತ್ತೇನೆ.</verse>
				<verse number="30">ನಾನು ನನ್ನನ್ನೇ ಹೊಗಳಿಕೊಳ್ಳಬೇಕಾಗಿ ಬಂದರೆ, ನನ್ನ ದೌರ್ಬಲ್ಯವನ್ನು ಬಹಿರಂಗಪಡಿಸುವ ವಿಷಯಗಳ ಬಗ್ಗೆ ಹೊಗಳಿಕೊಳ್ಳುತ್ತೇನೆ.</verse>
				<verse number="31">ನಾನು ಹೇಳುತ್ತಿರುವುದು ಸುಳ್ಳಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರೇ ಇದನ್ನು ಬಲ್ಲರು. ಅವರಿಗೆ ಯುಗಯುಗಾಂತರಕ್ಕೂ ಸ್ತುತಿ ಸಲ್ಲಲಿ!</verse>
				<verse number="32">ನಾನು ದಮಸ್ಕಸಿನಲ್ಲಿದ್ದಾಗ ರಾಜ ಅರೇತನ ಕೈಕೆಳಗಿದ್ದ ರಾಜ್ಯಪಾಲನು ನನ್ನನ್ನು ಸೆರೆಹಿಡಿಯುವ ಸಲುವಾಗಿ ಪಟ್ಟಣದ ದ್ವಾರಗಳಿಗೆ ಕಾವಲಿರಿಸಿದ್ದನು.</verse>
				<verse number="33">ಆದರೆ, ಕೆಲವರು ನನ್ನನ್ನು ಗೂಡೆಯಲ್ಲಿ ಕೂರಿಸಿ ಗೋಡೆಯ ಕಿಂಡಿಯೊಂದರ ಮೂಲಕ ಕೆಳಗಿಳಿಸಿದರು. ಹೀಗೆ ನಾನು ಅವನ ಕೈಯಿಂದ ಪಾರಾದೆ.</verse>
			</chapter>
			<chapter number="12">
				<verse number="1">ಹೊಗಳಿಕೊಳ್ಳುವುದು ಹಿತಕರವಲ್ಲ. ಆದರೂ ಹೊಗಳಿಕೊಳ್ಳಬೇಕಾದ್ದು ಅನಿವಾರ್ಯವಾಗಿದೆ. ಆದುದರಿಂದ ಪ್ರಭು ನನಗಿತ್ತ ದರ್ಶನಗಳನ್ನು ಮತ್ತು ಶ್ರುತಪಡಿಸಿದ ಸತ್ಯಗಳನ್ನು ಕುರಿತು ಹೇಳುತ್ತೇನೆ:</verse>
				<verse number="2">ಕ್ರೈಸ್ತನಾದ ಒಬ್ಬ ವ್ಯಕ್ತಿಯನ್ನು ನಾನು ಬಲ್ಲೆ. ಅವನು ಹದಿನಾಲ್ಕು ವರ್ಷಗಳಿಗೆ ಹಿಂದೆ ಮಹೋನ್ನತ ಸ್ವರ್ಗಕ್ಕೆ ಒಯ್ಯಲ್ಪಟ್ಟನು. ದೇಹಸಹಿತನಾಗಿಯೋ ದೇಹರಹಿತನಾಗಿಯೋ ಅದನ್ನು ನಾನರಿಯೆ. ದೇವರೊಬ್ಬರೇ ಬಲ್ಲರು.</verse>
				<verse number="3">ಅವನು ಪರಂಧಾಮಕ್ಕೆ ಒಯ್ಯಲ್ಪಟ್ಟನೆಂಬುದು ನಿಶ್ಚಯ. ದೇಹಸಹಿತವಾಗಿಯೋ ದೇಹರಹಿತವಾಗಿಯೋ ಅದನ್ನು ನಾನರಿಯೆ. ದೇವರೊಬ್ಬರೇ ಬಲ್ಲರು.</verse>
				<verse number="4">ಅಲ್ಲಿ ಅವನಿಗೆ ಕೇಳಿಬಂದ ವಿಷಯಗಳು ಮಾನವನ ವರ್ಣನೆಗೆ ಎಟುಕದವು. ಮಾನವನ ನುಡಿಗೆ ನಿಲುಕದವು.</verse>
				<verse number="5">ಅವನನ್ನು ಕುರಿತು ನಾನು ಹೆಮ್ಮೆಪಡುತ್ತೇನೆ. ಆದರೆ ನನ್ನನ್ನು ಕುರಿತು ನಾನು ಹೊಗಳಿಕೊಳ್ಳುವುದಿಲ್ಲ. ನನ್ನ ದೌರ್ಬಲ್ಯವೇ ನನ್ನ ಹೊಗಳಿಕೆ.</verse>
				<verse number="6">ಹಾಗೇನಾದರೂ ನಾನು ಹೊಗಳಿಕೊಳ್ಳಲು ಆಶಿಸಿದರೆ ಅದೇನು ಹುಚ್ಚುತನವಲ್ಲ. ಏಕೆಂದರೆ, ನಾನು ನುಡಿಯುತ್ತಿರುವುದು ಸತ್ಯವನ್ನೇ. ಆದರೂ ನಾನು ಹಾಗೆ ಹೊಗಳಿಕೊಳ್ಳುವುದಿಲ್ಲ. ಕಾರಣ, ಯಾರೂ ನನ್ನಲ್ಲಿ ಕಾಣುವುದಕ್ಕಿಂತಲೂ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನನ್ನು ಪರಿಗಣಿಸಬಾರದು.</verse>
				<verse number="7">ನನಗೆ ತಿಳಿಸಲಾದ ಗಹನ ಸತ್ಯಗಳಿಂದ ನಾನು ಉಬ್ಬಿಹೋಗದ ಹಾಗೆ ನನ್ನ ದೇಹದಲ್ಲಿ ಶೂಲದಂತೆ ನಾಟಿರುವ ಬೇನೆಯೊಂದನ್ನು ನನಗೆ ಕೊಡಲಾಯಿತು. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.</verse>
				<verse number="8">ಈ ಪೀಡೆ ನನ್ನನ್ನು ಬಿಟ್ಟು ತೊಲಗಲೆಂದು ನಾನು ಮೂರು ಸಾರಿ ಪ್ರಭುವಿನಲ್ಲಿ ಬೇಡಿಕೊಂಡೆ.</verse>
				<verse number="9">ಅದಕ್ಕವರು, “ನನ್ನ ಅನುಗ್ರಹವೇ ನಿನಗೆ ಸಾಕು. ನನ್ನ ಶಕ್ತಿ ಪರಿಪಕ್ವವಾಗುವುದು ನಿಶ್ಯಕ್ತಿಯಲ್ಲಿಯೇ,” ಎಂದು ಹೇಳಿದರು. ಕ್ರಿಸ್ತಯೇಸುವಿನ ಶಕ್ತಿ ನನ್ನಲ್ಲಿ ನೆಲಸುವಂತೆ ನನ್ನ ನಿಶ್ಯಕ್ತಿಯನ್ನು ಕುರಿತು ಮತ್ತಷ್ಟು ಹೆಮ್ಮೆಪಡುತ್ತೇನೆ.</verse>
				<verse number="10">ದುರ್ಬಲತೆಗಳಲ್ಲೂ ದುರವಸ್ಥೆಗಳಲ್ಲೂ ಮಾನನಷ್ಟದಲ್ಲೂ ಕಷ್ಟಹಿಂಸೆಗಳಲ್ಲೂ, ಆಪತ್ತುವಿಪತ್ತುಗಳಲ್ಲೂ ನಾನು ಕ್ರಿಸ್ತಯೇಸುವಿನ ನಿಮಿತ್ತ ಸಂತುಷ್ಟನಾಗಿದ್ದೇನೆ. ನಾನು ಬಲಶಾಲಿಯಾಗಿರುವುದು ಬಲಹೀನನಾಗಿರುವಾಗಲೇ.</verse>
				<verse number="11">ಹೀಗೆ ಹೊಗಳಿಕೊಳ್ಳುವ ನಾನು ಹುಚ್ಚನೇ ಸರಿ. ಆದರೆ ಇದಕ್ಕೆ ಒತ್ತಾಯಪಡಿಸಿದವರು ನೀವೇ. ನೀವೇ ನನ್ನನ್ನು ಹೊಗಳಬೇಕಾಗಿತ್ತು. ಏಕೆಂದರೆ, ನಾನು ಶೂನ್ಯಸಮಾನನಾದರೂ ಆ “ಮಹಾಪ್ರೇಷಿತರು” ಎಂದು ಹೇಳಿಕೊಳ್ಳುವವರಿಗಿಂತ ಕೀಳಾದವನಲ್ಲ.</verse>
				<verse number="12">ನಿಜವಾದ ಪ್ರೇಷಿತನ ಲಕ್ಷಣಗಳಾದ ಕಷ್ಟಸಹಿಷ್ಣುತೆ, ಸೂಚಕಕಾರ್ಯ, ಅದ್ಭುತಕಾರ್ಯ, ಮಹತ್ಕಾರ್ಯ ಇವುಗಳನ್ನೆಲ್ಲಾ ನಿಮ್ಮ ಮುಂದೆ ಪ್ರದರ್ಶಿಸಲಾಗಿದೆ.</verse>
				<verse number="13">ನನ್ನ ಜೀವನಾಂಶದ ಹೊಣೆಯನ್ನು ನಾನು ನಿಮ್ಮ ಮೇಲೆ ಹೊರಿಸಲಿಲ್ಲ. ಇದೊಂದನ್ನು ಬಿಟ್ಟರೆ ಯಾವ ವಿಷಯದಲ್ಲೂ ನಿಮ್ಮನ್ನು ಮಿಕ್ಕ ಸಭೆಗಳಿಗಿಂತ ಕೀಳಾಗಿ ಕಾಣಲಿಲ್ಲ. ಈ ಒಂದು ಅನ್ಯಾಯಕ್ಕಾಗಿ ನನ್ನನ್ನು ಕ್ಷಮಿಸಿರಿ.</verse>
				<verse number="14">ಇಗೋ ಮೂರನೆಯ ಬಾರಿಗೆ ನಾನು ನಿಮ್ಮ ಬಳಿಗೆ ಬರಲು ಸಿದ್ಧನಿದ್ದೇನೆ. ಈ ಸಾರಿಯೂ ನಾನು ನಿಮಗೆ ಹೊರೆಯಾಗಿರಲಾರೆ. ನನಗೆ ಬೇಕಾದವರು ನೀವೇ ಹೊರತು ನಿಮ್ಮ ಹಣಕಾಸು ಅಲ್ಲ. ಮಕ್ಕಳು ಹೆತ್ತವರಿಗಾಗಿ ಅಲ್ಲ, ಹೆತ್ತವರು ಮಕ್ಕಳಿಗಾಗಿ ಆಸ್ತಿಪಾಸ್ತಿಯನ್ನು ಕೂಡಿಡುವುದು ನ್ಯಾಯ.</verse>
				<verse number="15">ಅಂತೆಯೇ ನಿಮ್ಮ ಆತ್ಮಕ್ಷೇಮಕ್ಕಾಗಿ ನನಗಿರುವುದೆಲ್ಲವನ್ನೂ ಸಂತೋಷದಿಂದ ವ್ಯಯಮಾಡುತ್ತೇನೆ. ನನ್ನನ್ನೇ ಸವೆಸಲು ಸಿದ್ಧನಾಗಿದ್ದೇನೆ. ಇಷ್ಟರಮಟ್ಟಿಗೆ ನಿಮ್ಮನ್ನು ನಾನು ಪ್ರೀತಿಸುವಾಗ ನಿಮ್ಮ ಪ್ರೀತಿ ಕಡಿಮೆಯಾಗುವುದು ಸರಿಯೇ?</verse>
				<verse number="16">ನಾನೇನೂ ನಿಮಗೆ ಹೊರೆಯಾಗಿರಲಿಲ್ಲ ಎಂಬುದನ್ನು ನೀವು ಒಪ್ಪಿಕೊಂಡರೂ ಯುಕ್ತಿಯಿಂದ ನಿಮ್ಮನ್ನು ನಾನು ದುರುಪಯೋಗಪಡಿಸಿಕೊಂಡೆ ಎಂದು ನಿಮ್ಮಲ್ಲಿ ಯಾರಾದರೂ ಹೇಳಬಹುದು.</verse>
				<verse number="17">ನಾನು ನಿಮ್ಮ ಬಳಿಗೆ ಕಳುಹಿಸಿದವರಲ್ಲಿ ಯಾರ ಮೂಲಕವಾದರೂ ನಿಮ್ಮನ್ನು ಹಾಗೇನಾದರೂ ವಂಚಿಸಿದ್ದುಂಟೇ?</verse>
				<verse number="18">ನನ್ನ ಕೋರಿಕೆಯಂತೆಯೇ ತೀತನು ನಿಮ್ಮ ಬಳಿಗೆ ಬಂದದ್ದು; ಆತನ ಸಂಗಡ ಒಬ್ಬ ಸಹೋದರನನ್ನೂ ಕಳುಹಿಸಿದೆ. ತೀತನು ನಿಮ್ಮನ್ನು ವಂಚಿಸಿ ಏನಾದರೂ ಪ್ರಯೋಜನ ಪಡೆದದ್ದುಂಟೇ? ಎಂದಿಗೂ ಇಲ್ಲ. ನಾವಿಬ್ಬರು ಒಂದೇ ಮನೋಭಾವನೆಯಿಂದ ವರ್ತಿಸಲಿಲ್ಲವೇ? ಒಂದೇ ರೀತಿಯಲ್ಲಿ ನಡೆದುಕೊಳ್ಳಲಿಲ್ಲವೇ?</verse>
				<verse number="19">ನಾವು ತಪ್ಪಿತಸ್ಥರಲ್ಲವೆಂದು ನಿಮ್ಮ ಮುಂದೆ ಸಮರ್ಥಿಸಿಕೊಳ್ಳುವುದಕ್ಕಾಗಿ ಇದನ್ನು ಹೇಳುತ್ತಿದ್ದೇವೆಂದು ನೆನಸಬೇಡಿ. ದೇವರ ಸನ್ನಿಧಿಯಲ್ಲಿ, ಕ್ರಿಸ್ತಯೇಸುವಿನ ಹೆಸರಿನಲ್ಲಿ ನಾನು ನಿಮಗೆ ಹೇಳುತ್ತೇನೆ: ಪ್ರಿಯ ಸಹೋದರರೇ, ನಾವು ಮಾಡುತ್ತಿರುವುದೆಲ್ಲ ನಿಮ್ಮ ಆಧ್ಯಾತ್ಮಿಕ ಅಭಿವೃದ್ಧಿಗಾಗಿಯೇ.</verse>
				<verse number="20">ನಾನು ನಿಮ್ಮಲ್ಲಿ ಬಂದಾಗ ಒಂದು ವೇಳೆ ನೀವು ನನ್ನ ನಿರೀಕ್ಷೆಗೆ ತಕ್ಕಂತೆ ಇರುವುದಿಲ್ಲವೇನೋ ಮತ್ತು ನಿಮ್ಮ ನಿರೀಕ್ಷೆಗೆ ತಕ್ಕಂತೆ ನಾನು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ನಿಮ್ಮಲ್ಲಿ ಜಗಳ, ದ್ವೇಷ, ಅಸೂಯೆ, ಸ್ವಾರ್ಥ, ಚಾಡಿಮಾತು, ಹರಟೆ, ಅಹಂಕಾರ, ಅನೀತಿ - ಇವುಗಳು ಇರಬಹುದೇನೋ ಎಂಬ ದಿಗಿಲೂ ನನಗಿದೆ.</verse>
				<verse number="21">ಹಿಂದೆ ಪಾಪಮಾಡಿದವರಲ್ಲಿ ಹಲವರು ತಮ್ಮ ಅಶುದ್ಧ, ಅನೈತಿಕ, ಕಾಮುಕ ನಡತೆಗೆ ಪಶ್ಚಾತ್ತಾಪಪಡದೆ ಇದ್ದಾರೋ ಏನೋ, ನಾನು ಅವರಿಗಾಗಿ ಪರಿತಪಿಸಬೇಕಾದೀತೋ ಏನೋ, ನಿಮ್ಮ ನಿಮಿತ್ತ ನಾನು ತಲೆತಗ್ಗಿಸುವಂತೆ ದೇವರು ಮಾಡುತ್ತಾರೋ ಏನೋ, ಎಂಬ ಭಯವೂ ನನಗಿದೆ.</verse>
			</chapter>
			<chapter number="13">
				<verse number="1">ನಾನು ನಿಮ್ಮ ಬಳಿಗೆ ಬರುತ್ತಿರುವುದು ಇದು ಮೂರನೆಯ ಬಾರಿ. “ಯಾವ ದೂರಿದ್ದರೂ ಅದಕ್ಕೆ ಇಬ್ಬರು ಮೂವರು ಸಾಕ್ಷಿಗಳ ಆಧಾರವಿರಬೇಕು,” ಎಂದು ಲಿಖಿತವಾಗಿದೆ.</verse>
				<verse number="2">ನಾನು ಎರಡನೆಯ ಸಾರಿ ನಿಮ್ಮ ಬಳಿಗೆ ಬಂದಿದ್ದಾಗ, ಪಾಪಮಾಡಿದ್ದವರನ್ನೂ ಇತರರನ್ನೂ ಎಚ್ಚರಿಸಿದ್ದೆನು. ಈಗ ದೂರವಿದ್ದರೂ ಮತ್ತೆ ಎಚ್ಚರಿಸುತ್ತಿದ್ದೇನೆ. ಪುನಃ ನಾನು ಬರುವಾಗ ಅವರಾರನ್ನೂ ಶಿಕ್ಷಿಸದೆ ಬಿಡುವುದಿಲ್ಲ.</verse>
				<verse number="3">ಕ್ರಿಸ್ತಯೇಸುವೇ ನನ್ನ ಮುಖಾಂತರ ಮಾತನಾಡುತ್ತಾರೆ ಎಂಬುದಕ್ಕೆ ಆಧಾರ ಬೇಕೆನ್ನುತ್ತೀರಲ್ಲವೇ? ಯೇಸುಕ್ರಿಸ್ತರು ನಿಮ್ಮ ವಿಷಯದಲ್ಲಿ ದುರ್ಬಲರಾಗಿ ವರ್ತಿಸಲಿಲ್ಲ. ಪ್ರಬಲರಾಗಿ ನಿಮ್ಮಲ್ಲಿಯೇ ಇದ್ದಾರೆ ಎಂಬುದೇ ಇದಕ್ಕೆ ಆಧಾರ.</verse>
				<verse number="4">ಬಲಹೀನಾವಸ್ಥೆಯಲ್ಲಿ ಅವರನ್ನು ಶಿಲುಬೆಗೇರಿಸಲಾಯಿತು ಎಂಬುದೇನೋ ನಿಜ. ಆದರೆ, ದೇವರ ಶಕ್ತಿಯಿಂದ ಅವರು ಜೀವಂತರಾಗಿದ್ದಾರೆ. ಕ್ರಿಸ್ತಯೇಸುವಿನಲ್ಲಿ ನಾವೂ ಬಲಹೀನರೇ. ಆದರೆ ನಿಮ್ಮ ವಿಷಯದಲ್ಲಿ ವರ್ತಿಸುವಾಗ ದೇವರ ಶಕ್ತಿಯಿಂದ ಯೇಸುಸ್ವಾಮಿಯೊಂದಿಗೆ ಜೀವಂತರಾಗಿದ್ದೇವೆ.</verse>
				<verse number="5">ನಿಮ್ಮ ಜೀವನ ವಿಶ್ವಾಸದಲ್ಲಿ ಬೇರೂರಿದೆಯೇ ಎಂಬುದನ್ನು ನೀವೇ ಪರೀಕ್ಷಿಸಿನೋಡಿ. ನಿಮ್ಮ ಅಂತರಂಗವನ್ನು ಪರಿಶೋಧಿಸಿ ನೋಡಿ. ಕ್ರಿಸ್ತಯೇಸು ನಿಮ್ಮಲ್ಲಿ ಇದ್ದಾರೆ ಎಂಬುದನ್ನು ಅರಿತಿದ್ದೀರಿ ಅಲ್ಲವೇ? ಅವರು ನಿಮ್ಮಲ್ಲಿ ಇಲ್ಲವಾದರೆ ನೀವು ಅಯೋಗ್ಯರೇ ಸರಿ.</verse>
				<verse number="6">ನಾವಂತೂ ಅಯೋಗ್ಯರಲ್ಲ ಎಂಬ ಅರಿವು ನಿಮಗಾಗಿದೆ ಎಂದು ನಂಬುತ್ತೇನೆ.</verse>
				<verse number="7">ನೀವು ಯಾವ ಕೇಡನ್ನೂ ಮಾಡಬಾರದೆಂದು ದೇವರಲ್ಲಿ ನಾವು ಪ್ರಾರ್ಥಿಸುತ್ತೇವೆ. ಇದರಲ್ಲಿ ನಾವು ಮಾತ್ರ ಯೋಗ್ಯರೆಂದು ತೋರಿಸಿಕೊಳ್ಳುವ ಉದ್ದೇಶ ನಮಗಿಲ್ಲ. ನಾವು ಅಯೋಗ್ಯರೆನಿಸಿಕೊಂಡಿದ್ದರೂ ನೀವು ಒಳಿತನ್ನೇ ಮಾಡಬೇಕೆಂಬುದು ನಮ್ಮ ಉದ್ದೇಶ.</verse>
				<verse number="8">ಸತ್ಯದ ಪರವಾಗಿ ಅಲ್ಲದೆ ಅದಕ್ಕೆ ವಿರುದ್ಧವಾಗಿ ನಾವೇನನ್ನೂ ಮಾಡಲಾರೆವು.</verse>
				<verse number="9">ನೀವು ನಿಜವಾಗಿ ಬಲಾಢ್ಯರಾಗಿದ್ದರೆ ನಾವು ಬಲಹೀನರಾಗಿದ್ದರೂ ನಮಗೆ ಸಂತೋಷವೇ. ನೀವು ಕ್ರೈಸ್ತವಿಶ್ವಾಸದಲ್ಲಿ ಪರಿಪೂರ್ಣರಾಗಬೇಕೆಂಬುದೇ ನಮ್ಮ ಪ್ರಾರ್ಥನೆಯ ಉದ್ದೇಶ.</verse>
				<verse number="10">ಆದ್ದರಿಂದಲೇ ನಿಮ್ಮ ಬಳಿಗೆ ಬರುವುದಕ್ಕೆ ಮುಂಚೆಯೇ ಇದನ್ನೆಲ್ಲಾ ಬರೆಯುತ್ತಿದ್ದೇನೆ. ನಿಮ್ಮನ್ನು ಕೆಡವಿ ಹಾಳುಮಾಡುವುದಕ್ಕಲ್ಲ, ಕಟ್ಟಿ ಎಬ್ಬಿಸುವುದಕ್ಕಾಗಿಯೇ ಪ್ರಭು ನನಗೆ ಅಧಿಕಾರವನ್ನು ಕೊಟ್ಟಿರುವುದು. ಎಂದೇ, ನಿಮ್ಮ ಮಧ್ಯೆ ಬಂದಾಗ ಅಧಿಕಾರ ಪ್ರಯೋಗಿಸಿ ಕಠಿಣವಾಗಿ ವರ್ತಿಸಲು ಅವಕಾಶವಿರಬಾರದೆಂಬುದೇ ನನ್ನ ಅಪೇಕ್ಷೆ.</verse>
				<verse number="11">ಕೊನೆಯದಾಗಿ ಪ್ರಿಯ ಸಹೋದರರೇ, ಸಂತೋಷದಿಂದಿರಿ, ಪರಿಪೂರ್ಣರಾಗಲು ಪ್ರಯತ್ನಿಸಿರಿ. ನನ್ನ ಬುದ್ಧಿಮಾತುಗಳಿಗೆ ಕಿವಿಗೊಡಿ; ಒಮ್ಮನಸ್ಸಿನಿಂದ ಬಾಳಿರಿ; ಸಮಾಧಾನದಿಂದ ಜೀವಿಸಿರಿ; ಆಗ ಪ್ರೀತಿ ಮತ್ತು ಶಾಂತಿ ಸ್ವರೂಪರಾದ ದೇವರು ನಿಮ್ಮೊಡನೆ ಇರುತ್ತಾರೆ.</verse>
				<verse number="12">ಪವಿತ್ರವಾದ ಮುದ್ದಿಟ್ಟು ಒಬ್ಬರನ್ನು ಒಬ್ಬರು ವಂದಿಸಿರಿ. ದೇವಜನರೆಲ್ಲರೂ ನಿಮಗೆ ಶುಭಾಶಯಗಳನ್ನು ಕೋರಿದ್ದಾರೆ.</verse>
				<verse number="13">ನಮ್ಮ ಪ್ರಭು ಯೇಸುಕ್ರಿಸ್ತರ ವರಪ್ರಸಾದವೂ ದೇವರ ಪ್ರೀತಿಯೂ ಪವಿತ್ರಾತ್ಮರ ಅನ್ಯೋನ್ಯತೆಯೂ ನಿಮ್ಮೆಲ್ಲರೊಡನೆ ಇರಲಿ!</verse>
			</chapter>
		</book>
		<book number="48">
			<chapter number="1">
				<verse number="1">ಗಲಾತ್ಯದಲ್ಲಿರುವ ಸಭೆಗಳಿಗೆ, ಪ್ರೇಷಿತನಾದ ಪೌಲನು ಎಲ್ಲಾ ಸಹೋದರರೊಡನೆ ಸೇರಿ ಬರೆಯುವ ಪತ್ರ:</verse>
				<verse number="2">ಮಾನವರಿಂದಾಗಲಿ ಮಾನವ ಅಧಿಕಾರದಿಂದಾಗಲಿ ನಾನು ಪ್ರೇಷಿತನಾಗಿರದೆ ಯೇಸುಕ್ರಿಸ್ತರಿಂದಲೂ ಮತ್ತು ಅವರನ್ನು ಮರಣದಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಪ್ರೇಷಿತನಾಗಿರುತ್ತೇನೆ.</verse>
				<verse number="3">ನಮ್ಮ ತಂದೆಯಾದ ದೇವರಿಂದಲೂ ಪ್ರಭು ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ!</verse>
				<verse number="4">ಯೇಸುಕ್ರಿಸ್ತರು, ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮನ್ನು ಸದ್ಯದ ದುಷ್ಟಕಾಲದಿಂದ ಬಿಡುಗಡೆ ಮಾಡುವುದಕ್ಕಾಗಿ ಹಾಗು ನಮ್ಮ ಪಾಪಗಳ ಪರಿಹಾರಕ್ಕಾಗಿ ತಮ್ಮನ್ನೇ ಬಲಿಯಾಗಿ ಅರ್ಪಿಸಿದರು.</verse>
				<verse number="5">ದೇವರಿಗೆ ಯುಗಯುಗಾಂತರಕ್ಕೂ ಸ್ತುತಿಸ್ತೋತ್ರ ಸಲ್ಲಲಿ! ಆಮೆನ್.</verse>
				<verse number="6">ಕ್ರಿಸ್ತಯೇಸುವಿನ ಅನುಗ್ರಹದಿಂದ ನಿಮ್ಮನ್ನು ಕರೆದ ದೇವರನ್ನು ನೀವಿಷ್ಟು ಬೇಗನೆ ತ್ಯಜಿಸಿ, ಬೇರೊಂದು ‘ಶುಭಸಂದೇಶ’ವನ್ನು ಅಂಗೀಕರಿಸುತ್ತಿರುವಿರೆಂದು ಕೇಳಿ ನನಗೆ ಆಶ್ಚರ್ಯವಾಗುತ್ತಿದೆ.</verse>
				<verse number="7">ವಾಸ್ತವವಾಗಿ, ಬೇರೆ ಯಾವ ಶುಭಸಂದೇಶವೂ ಇಲ್ಲ. ಆದರೆ ಕೆಲವರು ನಿಮ್ಮಲ್ಲಿ ಗೊಂದಲವೆಬ್ಬಿಸಿ, ಕ್ರಿಸ್ತಯೇಸುವಿನ ಶುಭಸಂದೇಶವನ್ನು ಮಾರ್ಪಡಿಸಲು ಯತ್ನಿಸುತ್ತಾ ಇದ್ದಾರೆ.</verse>
				<verse number="8">ನಾವು ನಿಮಗೆ ಬೋಧಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ನಾವೇ ಆಗಲಿ, ಸ್ವರ್ಗದಿಂದ ಇಳಿದ ದೇವದೂತನೇ ಆಗಲಿ, ಯಾರೇ ಆಗಲಿ ಬೋಧಿಸಿದರೆ ಅವನು ಶಾಪಗ್ರಸ್ತನಾಗಲಿ!</verse>
				<verse number="9">ನೀವು ಅಂಗೀಕರಿಸಿದ ಶುಭಸಂದೇಶಕ್ಕೆ ವಿರುದ್ಧವಾದ ಸಂದೇಶವನ್ನು ಸಾರುವವನು ಶಾಪಗ್ರಸ್ತನಾಗಲಿ ಎಂದು ನಾನು ಮೊದಲೇ ಹೇಳಿದಂತೆ, ಮತ್ತೊಮ್ಮೆ ಒತ್ತಿ ಹೇಳುತ್ತೇನೆ.</verse>
				<verse number="10">ಇದರಿಂದ ನಾನು ಯಾರನ್ನು ಒಲಿಸಿಕೊಳ್ಳಲು ಯತ್ನಿಸುತ್ತಿದ್ದೇನೆ? ಮಾನವರನ್ನೋ? ದೇವರನ್ನೋ? ನಾನು ಮಾನವರ ಮೆಚ್ಚುಗೆಯನ್ನು ಗಳಿಸಿಕೊಳ್ಳಲು ಯತ್ನಿಸುತ್ತಿಲ್ಲ; ನಾನಿನ್ನೂ ಜನರ ಮೆಚ್ಚುಗೆಯನ್ನು ಗಳಿಸುವವನೇ ಆಗಿದ್ದರೆ ಕ್ರಿಸ್ತಯೇಸುವಿನ ದಾಸನಾಗಿರಲು ಸಾಧ್ಯವೇ ಇಲ್ಲ.</verse>
				<verse number="11">ಪ್ರಿಯ ಸಹೋದರರೇ, ನಾನು ಬೋಧಿಸಿದ ಶುಭಸಂದೇಶವು ಮಾನವ ಕಲ್ಪಿತ ಸಂದೇಶ ಅಲ್ಲವೆಂದು ನಿಮಗೆ ಮನದಟ್ಟು ಮಾಡಲು ಬಯಸುತ್ತೇನೆ.</verse>
				<verse number="12">ಈ ಶುಭಸಂದೇಶವನ್ನು ನಾನು ಮನುಷ್ಯರಿಂದ ಪಡೆಯಲಿಲ್ಲ; ಅದನ್ನು ಯಾರಿಂದಲೂ ಕಲಿತುಕೊಳ್ಳಲಿಲ್ಲ. ಯೇಸುಕ್ರಿಸ್ತರೇ ನನಗದನ್ನು ಶ್ರುತಪಡಿಸಿದರು.</verse>
				<verse number="13">ಹಿಂದೊಮ್ಮೆ ನಾನು ಯೆಹೂದ್ಯ ಮತಸ್ಥನಾಗಿದ್ದಾಗ ನನ್ನ ನಡತೆ ಹೇಗಿತ್ತೆಂದು ನೀವು ಚೆನ್ನಾಗಿ ಬಲ್ಲಿರಿ. ಆಗ ನಾನು ದೇವರ ಸಭೆಯನ್ನು ಕ್ರೂರವಾಗಿ ಹಿಂಸಿಸಿದೆ; ಅದನ್ನು ಧ್ವಂಸಮಾಡಲು ಪ್ರಯತ್ನಿಸಿದೆ.</verse>
				<verse number="14">ಇದಲ್ಲದೆ, ನಾನು ನನ್ನ ಪೂರ್ವಜರ ಮತಸಂಪ್ರದಾಯಗಳಲ್ಲಿ ಅತ್ಯಧಿಕ ನಿಷ್ಠೆಯುಳ್ಳವನಾಗಿದ್ದೆ. ಯೆಹೂದ್ಯ ಮತಾಚರಣೆಯಲ್ಲಿ ಅನೇಕ ಸಮವಯಸ್ಕರಿಗಿಂತ ಎಷ್ಟೋ ಮುಂದಾಗಿದ್ದೆ.</verse>
				<verse number="15">ಆದರೆ, ನಾನಿನ್ನೂ ತಾಯಿಯ ಗರ್ಭದಲ್ಲಿ ಇದ್ದಾಗಲೇ ದೇವರು ನನ್ನನ್ನು ತಮ್ಮ ಅನುಗ್ರಹದಿಂದ ಆರಿಸಿಕೊಂಡು ತಮ್ಮ ಸೇವೆಗೆ ಕರೆದರು.</verse>
				<verse number="16">ನಾನು ಯೆಹೂದ್ಯರಲ್ಲದವರಿಗೆ ಶುಭಸಂದೇಶವನ್ನು ಸಾರಬೇಕೆಂದು ದೇವರು ತಮ್ಮ ಮಗನನ್ನು ನನಗೆ ಶ್ರುತಪಡಿಸಿದರು. ಆಗ ಸಲಹೆಗಾಗಿ ನಾನು ಯಾರ ಬಳಿಗೂ ಹೋಗಲಿಲ್ಲ.</verse>
				<verse number="17">ನನಗಿಂತ ಮುಂಚಿತವಾಗಿ ಪ್ರೇಷಿತರಾದವರನ್ನು ಕಾಣಲೆಂದು ನಾನು ಜೆರುಸಲೇಮಿಗೂ ಹೋಗಲಿಲ್ಲ. ಬದಲಿಗೆ, ನೇರವಾಗಿ ಅರೇಬಿಯಾಕ್ಕೆ ಹೋದೆ. ಅಲ್ಲಿಂದ ದಮಸ್ಕಸ್ ನಗರಕ್ಕೆ ಹಿಂದಿರುಗಿದೆ.</verse>
				<verse number="18">ಮೂರು ವರ್ಷಗಳ ನಂತರವೇ ಕೇಫನನ್ನು ಕಂಡು ಮಾತನಾಡಲು ಜೆರುಸಲೇಮಿಗೆ ಹೋದೆ; ಹದಿನೈದು ದಿನ ಆತನೊಂದಿಗೆ ತಂಗಿದ್ದೆ.</verse>
				<verse number="19">ಆಗ, ಉಳಿದ ಪ್ರೇಷಿತರಲ್ಲಿ ಪ್ರಭುವಿನ ಸಹೋದರ ಯಕೋಬನಲ್ಲದೆ ಬೇರೆ ಯಾವ ಪ್ರೇಷಿತರನ್ನೂ ನಾನು ಕಾಣಲಿಲ್ಲ.</verse>
				<verse number="20">ನಾನು ನಿಮಗೆ ಬರೆಯುವ ಸಂಗತಿಗಳು ಸುಳ್ಳಲ್ಲ.ಎಂಬುದಕ್ಕೆ ದೇವರೇ ಸಾಕ್ಷಿ.</verse>
				<verse number="21">ಅನಂತರ ನಾನು ಸಿರಿಯ ಮತ್ತು ಸಿಲಿಸಿಯ ಪ್ರಾಂತ್ಯಗಳಿಗೆ ಹೋದೆ.</verse>
				<verse number="22">ಆಗ ಜುದೇಯ ಪ್ರಾಂತ್ಯದಲ್ಲಿದ್ದ ಕ್ರೈಸ್ತ ಸಭೆಗಳಿಗೆ ನನ್ನ ಪರಿಚಯವಾಗಿರಲಿಲ್ಲ.</verse>
				<verse number="23">‘ಹಿಂದೊಮ್ಮೆ ನಮ್ಮನ್ನು ಹಿಂಸಿಸುತ್ತಿದ್ದವನು, ತಾನು ನಾಶಮಾಡಲೆತ್ನಿಸಿದ ವಿಶ್ವಾಸವನ್ನೇ ಈಗ ಪ್ರಚಾರಮಾಡುತ್ತಿದ್ದಾನೆ’, ಎಂಬ ಸುದ್ದಿಯನ್ನು ಮಾತ್ರ ಕೇಳಿದ್ದರು.</verse>
				<verse number="24">ಈ ಕಾರಣ ನನ್ನನ್ನು ಕುರಿತು ಅವರು ದೇವರನ್ನು ಕೊಂಡಾಡುತ್ತಿದ್ದರು.</verse>
			</chapter>
			<chapter number="2">
				<verse number="1">ಹದಿನಾಲ್ಕು ವರ್ಷಗಳು ಕಳೆದ ಮೇಲೆ ತೀತನನ್ನು ಕರೆದುಕೊಂಡು ಬಾರ್ನಬನ ಜೊತೆಯಲ್ಲಿ ಪುನಃ ಜೆರುಸಲೇಮಿಗೆ ಹೋದೆ.</verse>
				<verse number="2">ದೇವಪ್ರೇರಣೆಗೆ ಅನುಸಾರವಾಗಿಯೇ ಅಲ್ಲಿಗೆ ಹೋದೆ. ಅನ್ಯಧರ್ಮೀಯರಿಗೆ ನಾನು ಸಾರುತ್ತಿದ್ದ ಸಂದೇಶ ಏನೆಂಬುದನ್ನು ಅಲ್ಲಿದ್ದ ಕೆಲವು ಗಣ್ಯವ್ಯಕ್ತಿಗಳಿಗೆ ಪ್ರತ್ಯೇಕವಾಗಿ ತಿಳಿಸಿದೆ. ಅದುವರೆಗೆ ನಾನು ಪಟ್ಟ ಶ್ರಮವಾಗಲಿ ಈಗ ಪಡುತ್ತಿರುವ ಶ್ರಮವಾಗಲಿ ವ್ಯರ್ಥವಾಗಬಾರದೆಂಬ ಉದ್ದೇಶದಿಂದ ಹೀಗೆ ಮಾಡಿದೆ.</verse>
				<verse number="3">ಆಗ ನನ್ನ ಸಂಗಡವಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿ ಆಗಬೇಕೆಂದು ಯಾರೂ ಒತ್ತಾಯಪಡಿಸಲಿಲ್ಲ.</verse>
				<verse number="4">ಗೂಢಾಚಾರರಾಗಿ ಬಂದಿದ್ದ ಕೆಲವು ಸಹೋದರರು ಅಲ್ಲಿದ್ದುದರಿಂದ ಒತ್ತಾಯ ನಡೆದೀತೆಂಬ ಶಂಕೆ ಇತ್ತು. ಇವರು ಕ್ರಿಸ್ತಯೇಸುವಿನಲ್ಲಿ ನಮಗಿರುವ ಮುಕ್ತ ಸ್ವಾತಂತ್ರ್ಯದ ಬಗ್ಗೆ ಗುಟ್ಟಾಗಿ ವಿಚಾರಿಸಲು ಬಂದಿದ್ದರು. ನಮ್ಮನ್ನು ಪುನಃ ದಾಸತ್ವದಲ್ಲಿ ಸಿಕ್ಕಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು.</verse>
				<verse number="5">ಆದರೆ ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲಿಲ್ಲ. ಹೀಗೆ ನಿಮಗೋಸ್ಕರ ಶುಭಸಂದೇಶದ ಸತ್ಯಾರ್ಥವನ್ನು ಸುಭದ್ರವಾಗಿ ಇರಿಸಿದೆವು.</verse>
				<verse number="6">ಅಲ್ಲಿದ್ದ ಗಣ್ಯವ್ಯಕ್ತಿಗಳು ಕೂಡ (ಅವರು ಹಿಂದೆ ಎಂಥವರಾಗಿದ್ದರು ಎಂಬುದು ನನಗೆ ಮುಖ್ಯವಲ್ಲ; ದೇವರು ಮುಖನೋಡಿ ಮಣೆ ಹಾಕುವವರಲ್ಲ) ನನಗೆ ಯಾವ ಹೊಸ ಸಲಹೆ ನೀಡಲಿಲ್ಲ.</verse>
				<verse number="7">ಬದಲಾಗಿ, ಯೆಹೂದ್ಯರಿಗೆ ಶುಭಸಂದೇಶವನ್ನು ಸಾರುವ ಸೇವೆಯನ್ನು ಪೇತ್ರನಿಗೆ ವಹಿಸಿಕೊಟ್ಟಂತೆಯೇ ಯೆಹೂದ್ಯರಲ್ಲದವರಿಗೆ ಶುಭಸಂದೇಶವನ್ನು ಸಾರುವ ಸೇವಾಕಾರ್ಯವನ್ನು ದೇವರು ನನಗೆ ವಹಿಸಿಕೊಟ್ಟಿದ್ದಾರೆ ಎಂಬುದನ್ನು ಆ ಗಣ್ಯವ್ಯಕ್ತಿಗಳು ಒಪ್ಪಿಕೊಂಡರು.</verse>
				<verse number="8">ಹೌದು, ಯೆಹೂದ್ಯರಿಗೆ ಪ್ರೇಷಿತನಾಗುವಂತೆ ಪೇತ್ರನನ್ನು ಪ್ರೇರೇಪಿಸಿದ ದೇವರು, ಯೆಹೂದ್ಯರಲ್ಲದವರಿಗೆ ಪ್ರೇಷಿತನಾಗಲು ನನ್ನನ್ನು ಪ್ರೇರೇಪಿಸಿದ್ದಾರೆ.</verse>
				<verse number="9">ನನಗೆ ಕೊಡಲಾಗಿದ್ದ ಈ ವಿಶೇಷ ವರವನ್ನು ಮನಗಂಡು ಸಭಾಸ್ತಂಭಗಳೆಂದು ಪರಿಗಣಿತರಾದ ಯಕೋಬ, ಕೇಫ ಮತ್ತು ಯೊವಾನ್ನರು ನನಗೂ ಬಾರ್ನಬನಿಗೂ ಕೈಯಲ್ಲಿ ಕೈಯನ್ನಿಟ್ಟು ಅನ್ಯೋನ್ಯತೆಯನ್ನು ಸೂಚಿಸಿದರು. ಅಲ್ಲದೆ, “ನೀವು ಯೆಹೂದ್ಯರಲ್ಲದವರ ಬಳಿಗೆ ಹೋಗಿರಿ, ನಾವು ಯೆಹೂದ್ಯರ ಬಳಿಗೆ ಹೋಗುತ್ತೇವೆ,” ಎಂದೂ ಹೇಳಿದರು.</verse>
				<verse number="10">ಅವರಲ್ಲಿದ್ದ ಬಡಬಗ್ಗರಿಗೆ ಮರೆಯದೆ ನೆರವಾಗಬೇಕೆಂಬ ಒಂದು ವಿಷಯವನ್ನು ಮಾತ್ರ ಕೇಳಿಕೊಂಡರು. ನಾನು ಮಾಡಬೇಕೆಂದು ಎಣಿಸಿದುದು ಅದೇ ಆಗಿತ್ತು.</verse>
				<verse number="11">ಆದರೆ ಕೇಫನು ಅಂತಿಯೋಕ್ಯಕ್ಕೆ ಬಂದಾಗ ಆತನು ತಪ್ಪಿತಸ್ಥನೆಂಬುದು ಸಿದ್ಧವಾಗಿದ್ದುದರಿಂದ ನಾನು ಆತನನ್ನು ಮುಖಾಮುಖಿಯಾಗಿ ಖಂಡಿಸಿದೆ.</verse>
				<verse number="12">ಯಕೋಬನ ಕಡೆಯಿಂದ ಕೆಲವು ಸಹೋದರರು ಬರುವುದಕ್ಕೆ ಮುಂಚೆ ಆತನು ಅನ್ಯಧರ್ಮೀಯರೊಡನೆ ಊಟಮಾಡುತ್ತಿದ್ದನು. ಆದರೆ ಅವರು ಬಂದ ಮೇಲೆ ಸುನ್ನತಿ ಪರವಾದಿಗಳಿಗೆ ಅಂಜಿ ಅನ್ಯಧರ್ಮೀಯರಿಂದ ದೂರವಾದನು.</verse>
				<verse number="13">ಅಂತೆಯೇ, ಕೇಫನ ಸಂಗಡ ಇದ್ದ ಮಿಕ್ಕ ಯೆಹೂದ್ಯರು ಕಪಟತನದಿಂದ ವರ್ತಿಸಿದರು. ಇವರ ವರ್ತನೆಗೆ ಬಾರ್ನಬನೂ ಸಹ ಮಾರುಹೋದನು.</verse>
				<verse number="14">ಅವರ ಈ ನಡತೆ, ಶುಭಸಂದೇಶದ ಸತ್ಯಕ್ಕೆ ಅನುಗುಣವಾದುದಲ್ಲ ಎಂದು ನನಗೆ ಮನದಟ್ಟಾಯಿತು. ಆಗ ನಾನು ಅವರೆಲ್ಲರ ಸಮ್ಮುಖದಲ್ಲೇ ಕೇಫನಿಗೆ: “ನೀನು ಯೆಹೂದ್ಯನಾಗಿದ್ದೂ ಯೆಹೂದ್ಯರಂತೆ ನಡೆಯದೆ ಅನ್ಯಧರ್ಮೀಯರಂತೆ ನಡೆದುಕೊಳ್ಳುತ್ತ ಇದ್ದಿಯಲ್ಲವೇ? ಹೀಗಿರುವಲ್ಲಿ ಅನ್ಯಧರ್ಮೀಯರು ಯೆಹೂದ್ಯರಂತೆ ನಡೆದುಕೊಳ್ಳಬೇಕೆಂದು ನೀನು ಒತ್ತಾಯಪಡಿಸುವುದಾದರೂ ಹೇಗೆ?” ಎಂದು ಕೇಳಿದೆ.</verse>
				<verse number="15">ನಾವಂತೂ ಹುಟ್ಟು ಯೆಹೂದ್ಯರು. ಪಾಪಿಗಳೆಂದು ಕರೆಯಲಾಗುವ ಅನ್ಯಧರ್ಮೀಯರಲ್ಲ.</verse>
				<verse number="16">ಆದರೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲ್ಲ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಡುವುದರಿಂದ ಮಾತ್ರ ಮಾನವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆಂದು ಬಲ್ಲೆವು. ದೇವರೊಡನೆ ಸತ್ಸಂಬಂಧವನ್ನು ಪಡೆಯುವ ಸಲುವಾಗಿ ನಾವೂ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಬಿಟ್ಟು, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿದ್ದೇವೆ. ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರಿಂದಲೆ ಯಾರೂ ದೇವರೊಡನೆ ಸತ್ಸಂಬಂಧಿಕರಾಗಿ ಕಂಡುಬರುವುದಿಲ್ಲ.</verse>
				<verse number="17">ಕ್ರಿಸ್ತಯೇಸುವಿನ ಮುಖಾಂತರ ದೇವರೊಡನೆ ಸತ್ಸಂಬಂಧವನ್ನು ಪಡೆಯಲು ಯತ್ನಿಸುತ್ತಿರುವ ನಾವು ಅನ್ಯಧರ್ಮೀಯರಂತೆ ಕಂಡುಬರುವುದಾದರೆ, ಕ್ರಿಸ್ತಯೇಸುವೇ ಪಾಪಕ್ಕೆ ಕಾರಣರೆಂದು ಹೇಳಿದಂತಾಗುತ್ತದೆ. ಆದರೆ ಅದೆಂದಿಗೂ ಆಗದು.</verse>
				<verse number="18">ನಾನು ಕೆಡವಿದ್ದನ್ನೇ ಪುನಃ ಕಟ್ಟಿದರೆ ನನ್ನನ್ನು ನಾನೇ ಅಪರಾಧಿ ಎಂದು ರುಜುವಾತು ಪಡಿಸಿದಂತಾಗುವುದಿಲ್ಲವೇ?</verse>
				<verse number="19">ನಾನಾದರೋ ದೇವರಿಗಾಗಿ ಜೀವಿಸುವುದಕ್ಕೋಸ್ಕರ, ಧರ್ಮಶಾಸ್ತ್ರದ ಮೂಲಕ, ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.</verse>
				<verse number="20">ಕ್ರಿಸ್ತಯೇಸುವಿನೊಂದಿಗೆ ನಾನೂ ಶಿಲುಬೆಗೇರಿಸಲಾದವನು. ಈಗ ಜೀವಿಸುವವನು ನಾನಲ್ಲ. ಕ್ರಿಸ್ತಯೇಸು ನನ್ನಲ್ಲಿ ಜೀವಿಸುತ್ತಾರೆ, ನನ್ನನ್ನು ಪ್ರೀತಿಸಿ ನನಗಾಗಿ ಪ್ರಾಣಾರ್ಪಣೆ ಮಾಡಿದ ದೇವರ ಪುತ್ರನಲ್ಲಿ ನಾನು ಇರಿಸಿರುವ ವಿಶ್ವಾಸದಿಂದಲೇ ನಾನೀಗ ಈ ದೇಹದಲ್ಲಿ ಜೀವಿಸುತ್ತಿದ್ದೇನೆ.</verse>
				<verse number="21">ದೇವರ ಅನುಗ್ರಹವನ್ನು ನಿರಾಕರಿಸುವಂಥವನು ನಾನಲ್ಲ. ಧರ್ಮಶಾಸ್ತ್ರದ ಮೂಲಕ ದೇವರೊಡನೆ ಸತ್ಸಂಬಂಧವು ದೊರಕುವುದಾದರೆ ಕ್ರಿಸ್ತಯೇಸು ಮರಣಕ್ಕೀಡಾದುದು ನಿರರ್ಥಕವೇ ಸರಿ.</verse>
			</chapter>
			<chapter number="3">
				<verse number="1">ಎಲೈ ಮತಿಗೆಟ್ಟ ಗಲಾತಿಯರೇ, ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸುಕ್ರಿಸ್ತರು ಶಿಲುಬೆಯ ಮೇಲೆ ಪ್ರಾಣಾರ್ಪಣೆ ಮಾಡಿದ್ದನ್ನು ನಿಮ್ಮ ಕಣ್ಣೆದುರಿಗೇ ಚಿತ್ರಿತಗೊಳಿಸಲಿಲ್ಲವೆ?</verse>
				<verse number="2">ನಿಮ್ಮ ಬಳಿ ಒಂದು ವಿಷಯವನ್ನು ಕೇಳಲಿಚ್ಛಿಸುತ್ತೇನೆ; ನೀವು ಪವಿತ್ರಾತ್ಮರನ್ನು ಪಡೆದುದು ಹೇಗೆ? ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲೋ? ಇಲ್ಲವೆ ಶುಭಸಂದೇಶವನ್ನು ಕೇಳಿ ವಿಶ್ವಾಸಿಸಿದ್ದರಿಂದಲೋ?</verse>
				<verse number="3">ನೀವು ಪವಿತ್ರಾತ್ಮ ಸಂಬಂಧವಾದ ಆಧ್ಯಾತ್ಮಿಕ ಜೀವನವನ್ನು ಪ್ರಾರಂಭಿಸಿಯೂ ಈಗ ಅದನ್ನು ಕೇವಲ ದೇಹಸಂಬಂಧವಾದ ವಿಧಿಯಿಂದ ಪೂರೈಸಬೇಕೆಂದಿದ್ದೀರೋ? ನೀವು ಅಷ್ಟು ಮತಿಗೆಟ್ಟವರೋ?</verse>
				<verse number="4">ನಿಮ್ಮ ಅನುಭವಗಳೆಲ್ಲವೂ ವ್ಯರ್ಥವಾದುವು ಎಂದು ಹೇಳೋಣವೇ?</verse>
				<verse number="5">ದೇವರು ನಿಮಗೆ ಪವಿತ್ರಾತ್ಮರನ್ನು ಪ್ರಧಾನಮಾಡಿ ಮಹತ್ಕಾರ್ಯಗಳನ್ನು ಎಸಗುತ್ತಾ ಬಂದಿದ್ದಾರೆ. ಹಾಗೆ ಮಾಡುತ್ತಿರುವುದು, ನೀವು ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲ್ಲ, ಶುಭಸಂದೇಶವನ್ನು ಕೇಳಿ, ವಿಶ್ವಾಸ ಇಟ್ಟಿರುವುದರಿಂದ.</verse>
				<verse number="6">ಪವಿತ್ರಗ್ರಂಥದಲ್ಲಿ ಬರೆದಿರುವಂತೆ: “ಅಬ್ರಹಾಮನು ದೇವರಲ್ಲಿ ವಿಶ್ವಾಸವಿಟ್ಟನು; ಈ ಕಾರಣ ದೇವರು ಆತನನ್ನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು.”</verse>
				<verse number="7">ಆದ್ದರಿಂದ ಯಾರು ವಿಶ್ವಾಸದಿಂದ ಜೀವಿಸುತ್ತಾರೋ ಅವರೇ ಅಬ್ರಹಾಮನ ಮಕ್ಕಳೆಂದು ತಿಳಿದುಕೊಳ್ಳಿ.</verse>
				<verse number="8">ಈ ವಿಶ್ವಾಸದ ಮೂಲಕವೇ ಅನ್ಯಧರ್ಮೀಯರನ್ನು ಕೂಡ ದೇವರು ತಮ್ಮ ಸತ್ಸಂಬಂಧದಲ್ಲಿ ಇರಿಸಿಕೊಳ್ಳುತ್ತಾರೆ, ಎಂದು ಪವಿತ್ರಗ್ರಂಥದಲ್ಲಿ ಮೊದಲೇ ಬರೆಯಲಾಗಿತ್ತು. ಈ ಕಾರಣದಿಂದಲೇ ಅಬ್ರಹಾಮನಿಗೆ, “ನಿನ್ನ ಮುಖಾಂತರವೇ ಎಲ್ಲಾ ಜನಾಂಗಗಳು ಆಶೀರ್ವಾದವನ್ನು ಪಡೆಯುವುವು,” ಎಂಬ ಶುಭವರ್ತಮಾನವನ್ನು ಪಡೆಯುವುವು,” ಎಂಬ ಶುಭವರ್ತಮಾನವನ್ನು ಮುಂಚಿತವಾಗಿ ತಿಳಿಸಲಾಯಿತು.</verse>
				<verse number="9">ಹೀಗಿರಲಾಗಿ, ವಿಶ್ವಾಸದಿಂದ ಬಾಳುವವರು ವಿಶ್ವಾಸಿಯಾದ ಅಬ್ರಹಾಮನು ಪಡೆದ ಸೌಭಾಗ್ಯವನ್ನೇ ಪಡೆಯುವರು.</verse>
				<verse number="10">ಧರ್ಮಶಾಸ್ತ್ರದ ವಿಧಿನಿಯಮಗಳನ್ನೇ ಆಧಾರವಾಗಿಟ್ಟುಕೊಂಡು ಬಾಳುವವರು ಶಾಪಗ್ರಸ್ತರು. ಏಕೆಂದರೆ, “ಧರ್ಮಗ್ರಂಥದಲ್ಲಿ ಬರೆದಿರುವುದನ್ನೆಲ್ಲಾ ಅನುದಿನವೂ ಕೈಗೊಂಡು ನಡೆಯದ ಪ್ರತಿಯೊಬ್ಬನೂ ಶಾಪಗ್ರಸ್ತನು,” ಎಂದು ಲಿಖಿತವಾಗಿದೆ.</verse>
				<verse number="11">ಇದಲ್ಲದೆ, ಧರ್ಮಶಾಸ್ತ್ರ ವಿಧಿಸುವುದನ್ನು ಪೂರೈಸುವುದರಿಂದ ಯಾರೂ ದೇವರೊಡನೆ ಸತ್ಸಂಬಂಧ ಪಡೆಯಲಾರರು ಎಂಬುದು ಸಹ ಸ್ಪಷ್ಟವಾಗಿದೆ. ಏಕೆಂದರೆ, “ಯಾರು ದೇವರೊಡನೆ ಸತ್ಸಂಬಂಧವನ್ನು ಹೊಂದಿರುತ್ತಾರೋ ಅವರು ವಿಶ್ವಾಸದಿಂದಲೇ ಸಜ್ಜೀವವನ್ನು ಪಡೆಯುತ್ತಾರೆ” ಎಂದು ಪವಿತ್ರಗ್ರಂಥದಲ್ಲೇ ಲಿಖಿತವಾಗಿದೆ.</verse>
				<verse number="12">ಧರ್ಮಶಾಸ್ತ್ರ ವಿಶ್ವಾಸವನ್ನು ಆಧರಿಸಿಲ್ಲ, ಬದಲಿಗೆ, “ಅದರ ವಿಧಿನಿಯಮಗಳನ್ನು ಪಾಲಿಸುವವನು ಅವುಗಳ ಮೂಲಕವಾಗಿ ಜೀವಿಸುತ್ತಾನೆ,” ಎಂದು ಬರೆಯಲಾಗಿದೆ.</verse>
				<verse number="13">ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.</verse>
				<verse number="14">ಇದರಿಂದಾಗಿ ಅಬ್ರಹಾಮನಿಗೆ ದೊರಕಿದ ಸೌಭಾಗ್ಯ, ಕ್ರಿಸ್ತಯೇಸುವಿನ ಮುಖಾಂತರ ಅನ್ಯಧರ್ಮೀಯರಿಗೂ ದೊರಕುವಂತಾಯಿತು; ವಿಶ್ವಾಸದ ಮೂಲಕವಾಗಿ, ದೇವರು ವಾಗ್ದಾನ ಮಾಡಿದ ಪವಿತ್ರಾತ್ಮ ನಮಗೂ ದೊರಕುವಂತಾಯಿತು.</verse>
				<verse number="15">ಪ್ರಿಯ ಸಹೋದರರೇ, ದೈನಂದಿನ ಜೀವನದಿಂದ ಒಂದು ಉದಾಹರಣೆಯನ್ನೇ ತೆಗೆದುಕೊಳ್ಳೋಣ: ಒಬ್ಬನು ಮತ್ತೊಬ್ಬನೊಡನೆ ಒಂದು ಒಪ್ಪಂದ ಮಾಡಿಕೊಳ್ಳುತ್ತಾನೆ. ಕ್ರಮಬದ್ಧವಾಗಿ ಅದನ್ನು ಮಾಡಿ ಮುಗಿಸಿದ ಮೇಲೆ ಯಾರೂ ಅದನ್ನು ರದ್ದುಮಾಡುವಂತಿಲ್ಲ, ಬದಲಾಯಿಸುವಂತಿಲ್ಲ.</verse>
				<verse number="16">ಹಾಗೆಯೇ, ದೇವರು ಅಬ್ರಹಾಮನಿಗೂ ಆತನ ಸಂತತಿಗೂ ವಾಗ್ದಾನಗಳನ್ನು ಮಾಡಿದರು. \ನಿನ್ನ ಸಂತತಿಗಳಿಗೆ\ ಎಂದು ಹೇಳಿ ಅನೇಕರನ್ನು ಸೂಚಿಸದೆ “ನಿನ್ನ ಸಂತತಿಗೆ” ಎಂದು ಹೇಳಿ ಒಬ್ಬ ವ್ಯಕ್ತಿಯನ್ನೇ ಆ ವಾಗ್ದಾನದಲ್ಲಿ ಸೂಚಿಸಿದರು. ಆ ವ್ಯಕ್ತಿಯೇ ಕ್ರಿಸ್ತಯೇಸು.</verse>
				<verse number="17">ದೇವರು ಅಬ್ರಹಾಮನೊಂದಿಗೆ ಮಾಡಿಮುಗಿಸಿದ ಒಪ್ಪಂದವನ್ನು ನಾನೂರ ಮೂವತ್ತು ವರ್ಷಗಳಾದ ಮೇಲೆ ಬಂದ ಧರ್ಮಶಾಸ್ತ್ರದಿಂದ ರದ್ದುಪಡಿಸಲಾಗದು; ಆ ವಾಗ್ದಾನವನ್ನು ವ್ಯರ್ಥಪಡಿಸಲಾಗದು.</verse>
				<verse number="18">ದೇವರು ನಮಗೆ ಹಕ್ಕುಬಾಧ್ಯತೆಯಾಗಿ ಕೊಡುವುದು ಧರ್ಮಶಾಸ್ತ್ರದಿಂದ ಲಭಿಸುವುದಾದರೆ ಅದು ಇನ್ನು ದೇವವಾಗ್ದಾನದಿಂದ ಲಭಿಸದು ಎಂದಂತಾಯಿತು. ಆದರೆ ದೇವರು ಅದನ್ನು ಅಬ್ರಹಾಮನಿಗೆ ದಯಪಾಲಿಸಿದ್ದು ವಾಗ್ದಾನದ ಮೂಲಕವೇ.</verse>
				<verse number="19">ಹಾಗಾದರೆ ಧರ್ಮಶಾಸ್ತ್ರದ ಉದ್ದೇಶವಾದರೂ ಏನು? ಅಪರಾಧದ ಅರಿವನ್ನು ಮೂಡಿಸುವುದಕ್ಕಾಗಿ ಅದನ್ನು ಕಾಲಕ್ರಮೇಣ ಸೇರಿಸಲಾಯಿತು. ದೇವವಾಗ್ದಾನವನ್ನು ಪಡೆದ ಆ ಸಂತತಿ ಬರುವ ತನಕ ಮಾತ್ರ ಅದು ಇರಲೆಂದು ಕೊಡಲಾಯಿತು. ಅಲ್ಲದೆ, ಕೇವಲ ದೇವದೂತರ ಮುಖಾಂತರ, ಒಬ್ಬ ಮಾನವ ಮಧ್ಯಸ್ಥನ ಮೂಲಕ ಮಾತ್ರ ಅದನ್ನು ನೀಡಲಾಯಿತು.</verse>
				<verse number="20">ಒಂದೇ ಪಕ್ಷ ಇರುವಾಗ ಮಧ್ಯಸ್ಥನು ಬೇಕಿಲ್ಲ, ದೇವರಾದರೋ ಒಬ್ಬರೇ.</verse>
				<verse number="21">ಹಾಗಾದರೆ, ಧರ್ಮಶಾಸ್ತ್ರ ದೇವರ ವಾಗ್ದಾನಕ್ಕೆ ವಿರುದ್ಧವಾಗಿದೆಯೆಂದು ಹೇಳೋಣವೇ? ಎಂದಿಗೂ ಇಲ್ಲ. ಸಜ್ಜೀವಗೊಳಿಸುವ ಶಕ್ತಿಯನ್ನು ಧರ್ಮಶಾಸ್ತ್ರ ಹೊಂದಿದ್ದರೆ ಅದನ್ನು ಅನುಸರಿಸುವುದರಿಂದ ನಿಸ್ಸಂದೇಹವಾಗಿ ದೇವರೊಡನೆ ಸತ್ಸಂಬಂಧ ದೊರಕುತ್ತಿತ್ತು.</verse>
				<verse number="22">ಅದಕ್ಕೆ ಬದಲಾಗಿ ಸಮಸ್ತ ಲೋಕವೂ ಪಾಪಕ್ಕೆ ಒಳಗಾಯಿತು ಎಂದು ಪವಿತ್ರಗ್ರಂಥ ಸ್ಪಷ್ಟೀಕರಿಸುತ್ತದೆ. ಹೀಗೆ, ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.</verse>
				<verse number="23">ಕ್ರೈಸ್ತವಿಶ್ವಾಸದ ಕಾಲವು ಬರುವುದಕ್ಕೆ ಮೊದಲು ನಾವು ಧರ್ಮಶಾಸ್ತ್ರದ ನಿರ್ಬಂಧಕ್ಕೆ ಒಳಗಾಗಿ ಕೈದಿಗಳಂತೆ ಇದ್ದೆವು. ಈ ವಿಶ್ವಾಸವು ಪ್ರಕಟವಾಗುವವರೆಗೂ ಇದೇ ಪರಿಸ್ಥಿತಿ ಇತ್ತು.</verse>
				<verse number="24">ಅಂತೆಯೇ, ವಿಶ್ವಾಸದ ಮೂಲಕ ನಾವು ದೇವರೊಡನೆ ಸತ್ಸಂಬಂಧ ಹೊಂದುವಂತೆ ಕ್ರಿಸ್ತಯೇಸು ಬರುವತನಕ ಅದು ನಮಗೆ ಕಾವಲಾಗಿತ್ತು.</verse>
				<verse number="25">ಈಗ ಕ್ರೈಸ್ತವಿಶ್ವಾಸವು ಆಗಮಿಸಿರುವುದರಿಂದ ಇನ್ನು ನಾವು ಧರ್ಮಶಾಸ್ತ್ರದ ಅಧೀನದಲ್ಲಿ ಇಲ್ಲ.</verse>
				<verse number="26">ಕ್ರಿಸ್ತಯೇಸುವಿನಲ್ಲಿ ಇಟ್ಟಿರುವ ವಿಶ್ವಾಸದ ಮೂಲಕ ನೀವೆಲ್ಲರೂ ದೇವರ ಮಕ್ಕಳಾಗಿದ್ದೀರಿ.</verse>
				<verse number="27">ಹೇಗೆಂದರೆ, ಕ್ರಿಸ್ತಯೇಸುವಿನಲ್ಲಿ ಒಂದಾಗುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತಂಬರರಾಗಿದ್ದೀರಿ.</verse>
				<verse number="28">ನೀವೆಲ್ಲರೂ ಕ್ರಿಸ್ತಯೇಸುವಿನಲ್ಲಿ ಒಂದಾಗಿದ್ದೀರಿ. ಎಂದೇ, ಇನ್ನು ಮೇಲೆ ಯೆಹೂದ್ಯ-ಯೆಹೂದ್ಯನಲ್ಲದವ, ದಾಸ-ದಣಿ, ಗಂಡು-ಹೆಣ್ಣು, ಎಂಬ ಭೇದವಿಲ್ಲ.</verse>
				<verse number="29">ನೀವು ಕ್ರಿಸ್ತಯೇಸುವಿಗೆ ಸೇರಿದವರಾಗಿದ್ದರೆ ಅಬ್ರಹಾಮನ ಸಂತತಿಯೂ ಆಗಿದ್ದೀರಿ; ದೈವವಾಗ್ದಾನದ ಪ್ರಕಾರ ವಾರಸುದಾರರೂ ಆಗಿದ್ದೀರಿ.</verse>
			</chapter>
			<chapter number="4">
				<verse number="1">ನಾನು ಮತ್ತೆ ಹೇಳುವುದೇನೆಂದರೆ; ವಾರಸುದಾರನು ತಂದೆಯ ಆಸ್ತಿಗೆಲ್ಲಾ ಹಕ್ಕುದಾರನಾಗಿದ್ದರೂ, ಅವನು ಬಾಲಕನಾಗಿರುವ ತನಕ ಅವನಿಗೂ ಆಳಿಗೂ ವ್ಯತ್ಯಾಸವಿರುವುದಿಲ್ಲ.</verse>
				<verse number="2">ತಂದೆ ಗೊತ್ತುಮಾಡಿದ ದಿನದವರೆಗೂ ಅವನು ಪೋಷಕರ ಹಾಗೂ ಕಾರ್ಯನಿರ್ವಾಹಕರ ಕೈಕೆಳಗೆ ಇರುತ್ತಾನೆ.</verse>
				<verse number="3">ನಮ್ಮ ಸ್ಥಿತಿಯೂ ಹಾಗೆಯೇ ಇತ್ತು. ನಾವು ಬಾಲಕರಂತೆ ವಿಶ್ವದ ಮೂಲಭೂತ ಶಕ್ತಿಗಳಿಗೆ ಅಧೀನರಾಗಿದ್ದೆವು.</verse>
				<verse number="4">ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು.</verse>
				<verse number="5"></verse>
				<verse number="6">ನೀವು ದೇವರ ಮಕ್ಕಳಾಗಿರುವುದರಿಂದಲೇ, “ಅಪ್ಪಾ, ತಂದೆಯೇ,” ಎಂದು ಕರೆಯುವ ತಮ್ಮ ಪುತ್ರನ ಆತ್ಮವನ್ನು ದೇವರು ನಮ್ಮ ಹೃದಯಗಳಿಗೆ ಕಳುಹಿಸಿದ್ದಾರೆ.</verse>
				<verse number="7">ಆದ್ದರಿಂದ, ದೇವರ ಅನುಗ್ರಹದಿಂದಲೇ ನೀನು ಇನ್ನು ಮನೆಯಾಳಲ್ಲ, ಮಗನಾಗಿದ್ದೀ. ಮಗನೆಂದ ಮೇಲೆ ನೀನು ವಾರಸುದಾರನೂ ಹೌದು.</verse>
				<verse number="8">ಹಿಂದೆ ನೀವು ದೇವರನ್ನು ಅರಿಯದೆ ಇದ್ದಿರಿ. ದೇವರಲ್ಲದವುಗಳಿಗೆ ಅಧೀನರಾಗಿದ್ದೀರಿ.</verse>
				<verse number="9">ಈಗಲಾದರೋ ನಿಜದೇವರನ್ನು ಅರಿತುಕೊಂಡಿದ್ದೀರಿ; ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ, ದುರ್ಬಲ ಹಾಗೂ ದರಿದ್ರವಾದ ಮೂಲಭೂತ ಶಕ್ತಿಗಳಿಗೆ ನೀವು ಮರಳುವುದೇಕೆ? ಪುನಃ ಅವುಗಳಿಗೆ ಗುಲಾಮರಾಗಲು ಇಚ್ಛಿಸುವುದೇಕೆ?</verse>
				<verse number="10">ನೀವು ಶುಭಾಶುಭ ದಿನಗಳನ್ನು, ಮಾಸಗಳನ್ನು ಮತ್ತು ಸಂವತ್ಸರಗಳನ್ನು ಜಾಗರೂಕತೆಯಿಂದ ನೋಡುತ್ತೀರಿ.</verse>
				<verse number="11">ನಿಮಗಾಗಿ ನಾನು ಪಟ್ಟ ಪ್ರಯಾಸವೆಲ್ಲ ವ್ಯರ್ಥವಾಯಿತೇನೋ ಎಂಬ ಶಂಕೆ ನನ್ನನ್ನು ಕಾಡುತ್ತಿದೆ.</verse>
				<verse number="12">ಪ್ರಿಯ ಸಹೋದರರೇ, ನಾನು ನಿಮ್ಮಂತೆ ಆದಹಾಗೆ, ನೀವೂ ನನ್ನಂತೆ ಆಗಬೇಕೆಂದು ಕಳಕಳಿಯಿಂದ ಕೇಳಿಕೊಳ್ಳುತ್ತೇನೆ. ನೀವು ನನಗೆ ಯಾವ ಅನ್ಯಾಯವನ್ನೂ ಮಾಡಿಲ್ಲ.</verse>
				<verse number="13">ನಾನು ಅಸ್ವಸ್ಥನಾಗಿದ್ದುದರಿಂದ ನಿಮ್ಮಲ್ಲೇ ಇದ್ದು ಮೊತ್ತಮೊದಲ ಬಾರಿಗೆ ಶುಭಸಂದೇಶವನ್ನು ನಿಮಗೆ ಸಾರಲು ಆಸ್ಪದವಾಯಿತು. ಇದನ್ನು ನೀವು ಬಲ್ಲಿರಿ.</verse>
				<verse number="14">ನನ್ನ ದೇಹಸ್ಥಿತಿ ನಿಮಗೆ ಬೇಸರವನ್ನುಂಟುಮಾಡುವಂಥದ್ದಾಗಿದ್ದರೂ ನೀವು ನನ್ನನ್ನು ತಿರಸ್ಕರಿಸಲಿಲ್ಲ; ಅಸಹ್ಯಪಡಲಿಲ್ಲ. ನನ್ನನ್ನು ದೇವದೂತನಂತೆ ಏಕೆ, ಕ್ರಿಸ್ತಯೇಸುವಿನಂತೆಯೇ ಭಾವಿಸಿ ಉಪಚರಿಸಿದಿರಿ.</verse>
				<verse number="15">ಅದೊಂದು ಭಾಗ್ಯವೆಂದೇ ತಿಳಿದಿರಿ. ಆ ಭಾವನೆ ಈಗೆಲ್ಲಿದೆ? ಆಗ, ಬೇಕಾಗಿದ್ದಿದ್ದರೆ ನಿಮ್ಮ ಕಣ್ಣುಗಳನ್ನೇ ಕಿತ್ತು ನನಗೆ ಕೊಡುತ್ತಿದ್ದಿರಿ ಎಂದು ನಾನು ಹೇಳಬಲ್ಲೆ!</verse>
				<verse number="16">ಹೀಗಿರಲಾಗಿ ಸತ್ಯವನ್ನು ನುಡಿಯುವುದರಿಂದ ನಾನು ನಿಮಗೆ ಶತ್ರುವಾಗಿಬಿಟ್ಟೆನೇ?</verse>
				<verse number="17">ಆ ನನ್ನ ವಿರೋಧಿಗಳು ನಿಮ್ಮನ್ನು ಮೆಚ್ಚಿಸಲು ತುಂಬ ಆಸಕ್ತಿಯನ್ನು ತೋರಿಸುತ್ತಿದ್ದಾರೆ. ಆದರೆ ಅವರ ಉದ್ದೇಶ ಒಳ್ಳೆಯದಲ್ಲ. ನೀವು ಸಹ ಅವರನ್ನು ಅಷ್ಟೇ ಆಸಕ್ತಿಯಿಂದ ಮೆಚ್ಚಿಸಬೇಕೆಂಬುದೇ ಅವರ ಉದ್ದೇಶ. ಆದ್ದರಿಂದಲೇ ನಿಮ್ಮನ್ನು ನನ್ನಿಂದ ಬೇರ್ಪಡಿಸಲು ಯತ್ನಿಸುತ್ತಿದ್ದಾರೆ.</verse>
				<verse number="18">ನಾನು ನಿಮ್ಮ ಬಳಿ ಇರಲಿ, ಇಲ್ಲದಿರಲಿ, ಬೇರೆಯವರು ನಿಮ್ಮಲ್ಲಿ ಅಷ್ಟು ಆಸಕ್ತರಾಗಿರುವುದು ಒಳ್ಳೆಯದೇ. ಆದರೆ ಅಂಥ ಆಸಕ್ತಿ ಸದುದ್ದೇಶದಿಂದ ಕೂಡಿರಬೇಕು.</verse>
				<verse number="19">ನನ್ನ ಪ್ರಿಯ ಮಕ್ಕಳೇ, ತಾಯಿ ತನ್ನ ಮಗುವಿಗಾಗಿ ಪ್ರಸವವೇದನೆಪಡುವ ಪ್ರಕಾರ ಕ್ರಿಸ್ತಯೇಸು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಿಮಗಾಗಿ ನಾನು ಮತ್ತೆ ಅಂಥ ವೇದನೆಯನ್ನು ಪಡುತ್ತಿದ್ದೇನೆ.</verse>
				<verse number="20">ನಿಮ್ಮ ವಿಷಯದಲ್ಲಿ ಏನು ಮಾಡಬೇಕೋ ನನಗೆ ತೋಚುತ್ತಿಲ್ಲ. ಬಹುಶಃ ನೇರವಾಗಿ ನಿಮ್ಮ ಬಳಿಗೆ ಬಂದು, ನಿಮ್ಮ ಮಧ್ಯದಲ್ಲೇ ಇದ್ದು ನನ್ನ ಮಾತಿನ ವೈಖರಿಯನ್ನು ಬದಲಾಯಿಸಿದ್ದರೆ ಚೆನ್ನಾಗಿರುತ್ತಿತ್ತೇನೋ!</verse>
				<verse number="21">ಧರ್ಮಶಾಸ್ತ್ರಕ್ಕೆ ಅಧೀನರಾಗಲು ಆಶಿಸುವವರೇ, ನನಗೆ ಉತ್ತರ ಕೊಡಿ: ಅದೇ ಧರ್ಮಶಾಸ್ತ್ರ ಹೇಳುವುದನ್ನು ನೀವು ಕೇಳಿಲ್ಲವೇ?</verse>
				<verse number="22">ಅಬ್ರಹಾಮನಿಗೆ ಇಬ್ಬರು ಮಕ್ಕಳಿದ್ದರು: ಒಬ್ಬನು ದಾಸಿಯಿಂದ ಹುಟ್ಟಿದವನು; ಇನ್ನೊಬ್ಬನು ಧರ್ಮಪತ್ನಿಯಿಂದ ಹುಟ್ಟಿದವನು.</verse>
				<verse number="23">ದಾಸಿಯ ಮಗ ಪ್ರಕೃತಿ ಸಹಜವಾಗಿ ಹುಟ್ಟಿದವನು; ಧರ್ಮಪತ್ನಿಯ ಮಗನಾದರೋ ವಾಗ್ದಾನದ ಫಲವಾಗಿ ಹುಟ್ಟಿದವನು.</verse>
				<verse number="24">ಇದೊಂದು ಅಲಂಕಾರ ರೂಪ. ಆ ಇಬ್ಬರು ಸ್ತ್ರೀಯರು ಎರಡು ಒಡಂಬಡಿಕೆಗಳಿಗೆ ಸದೃಶರಾಗಿದ್ದಾರೆ. ಒಂದು, ಸೀನಾಯ್ ಪರ್ವತದಲ್ಲಿ ಮಾಡಲಾದ ಒಡಂಬಡಿಕೆ; ಅದು ದಾಸತ್ವಕ್ಕೆ ಮಕ್ಕಳನ್ನು ಹೆರುತ್ತದೆ. ಅದನ್ನು ಸೂಚಿಸುವವಳೇ ದಾಸಿ ಹಾಗರಳು.</verse>
				<verse number="25">ಅರೇಬಿಯಾದಲ್ಲಿರುವ ಸೀನಾಯ್ ಪರ್ವತವನ್ನು ಪ್ರತಿನಿಧಿಸುವ ಈ ಹಾಗರಳು ಈಗಿನ ಜೆರುಸಲೇಮ್ ನಗರವನ್ನು ಹೋಲುತ್ತಾಳೆ. ಹೇಗೆಂದರೆ, ಜೆರುಸಲೇಮ್ ತನ್ನ ಮಕ್ಕಳ ಸಮೇತವಾಗಿ ದಾಸತ್ವದಲ್ಲಿ ಇದೆ.</verse>
				<verse number="26">ಆದರೆ ಸ್ವರ್ಗೀಯ ಜೆರುಸಲೇಮ್ ದಾಸಿ ಅಲ್ಲ, ಸ್ವತಂತ್ರಳು, ಈಕೆಯೇ ನಮ್ಮ ತಾಯಿ.</verse>
				<verse number="27">“ಸಂತಾನವಿಲ್ಲದ ಸ್ತ್ರೀಯೇ, ಸಂತೋಷಿಸು ಪ್ರಸವವೇದನೆಯನರಿಯದವಳೇ, ಹರ್ಷೋದ್ಗಾರಮಾಡು ಗಂಡನುಳ್ಳವಳಿಗಿಂತ ಕೈಬಿಟ್ಟವಳ ಸಂತಾನ ಹೆಚ್ಚು.” ಎಂದು ಪವಿತ್ರಗ್ರಂಥದಲ್ಲೇ ಲಿಖಿತವಾಗಿದೆ.</verse>
				<verse number="28">ಆದ್ದರಿಂದ ಪ್ರಿಯ ಸಹೋದರರೇ, ನೀವು ಇಸಾಕನಂತೆ ವಾಗ್ದಾನದ ಫಲವಾಗಿ ಹುಟ್ಟಿದ ಮಕ್ಕಳು.</verse>
				<verse number="29">ಅಂದು ಪ್ರಕೃತಿಸಹಜವಾಗಿ ಹುಟ್ಟಿದವನು ದೇವರಾತ್ಮದಿಂದ ಹುಟ್ಟಿದವನನ್ನು ಹಿಂಸೆಪಡಿಸಿದಂತೆ ಇಂದೂ ನಡೆಯುತ್ತದೆ.</verse>
				<verse number="30">ಪವಿತ್ರಗ್ರಂಥ ಹೇಳುವುದಾದರೂ ಏನು? “ದಾಸಿಯನ್ನೂ ಅವಳ ಮಗನನ್ನೂ ಹೊರಕ್ಕೆ ದೂಡು; ದಾಸಿಯ ಮಗನು ಧರ್ಮಪತ್ನಿಯ ಮಗನೊಂದಿಗೆ ಪಾಲುಗಾರನಾಗಕೂಡದು.” ಎಂದಲ್ಲವೇ?</verse>
				<verse number="31">ಹೌದು, ಪ್ರಿಯ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಧರ್ಮಪತ್ನಿಯ ಮಕ್ಕಳು.</verse>
			</chapter>
			<chapter number="5">
				<verse number="1">ನಾವು ಮುಕ್ತ ಸ್ವಾತಂತ್ರ್ಯದಿಂದ ಬಾಳಬೇಕೆಂದು ಕ್ರಿಸ್ತಯೇಸು ನಮ್ಮನ್ನು ಬಿಡುಗಡೆಮಾಡಿದರು. ಆದ್ದರಿಂದ ದೃಢವಾಗಿರಿ. ಗುಲಾಮಗಿರಿಯ ನೊಗಕ್ಕೆ ಪುನಃ ಕೊರಳನ್ನು ಒಡ್ಡದಿರಿ.</verse>
				<verse number="2">ಪೌಲನಾದ ನಾನು ಹೇಳುವುದನ್ನು ಕೇಳಿ: ನೀವು ಸುನ್ನತಿ ಮಾಡಿಸಿಕೊಂಡರೆ ಕ್ರಿಸ್ತಯೇಸುವಿನಿಂದ ನಿಮಗೆ ಯಾವ ಪ್ರಯೋಜನವೂ ಆಗುವುದಿಲ್ಲ.</verse>
				<verse number="3">ಸುನ್ನತಿಮಾಡಿಸಿಕೊಳ್ಳುವ ಪ್ರತಿಯೊಬ್ಬನೂ ಇಡೀ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಲು ಬದ್ಧನಾಗಿದ್ದಾನೆ ಎಂದು ಪುನಃ ನಿಮಗೆ ನಾನು ಒತ್ತಿ ಹೇಳುತ್ತೇನೆ.</verse>
				<verse number="4">ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸುವುದರ ಮೂಲಕವೇ ದೇವರೊಡನೆ ಸತ್ಸಂಬಂಧ ಪಡೆಯಬೇಕೆಂದಿರುವ ನೀವು ಕ್ರಿಸ್ತಯೇಸುವಿನಿಂದ ಬೇರ್ಪಟ್ಟಿದ್ದೀರಿ. ದೈವಾನುಗ್ರಹದಿಂದ ದೂರವಾಗಿದ್ದೀರಿ.</verse>
				<verse number="5">ನಾವಾದರೋ ಪವಿತ್ರಾತ್ಮರ ಮುಖಾಂತರ ವಿಶ್ವಾಸದಿಂದ ದೇವರೊಂದಿಗೆ ಸತ್ಸಂಬಂಧವನ್ನು ಹೊಂದುತ್ತೇವೆಂಬ ನಿರೀಕ್ಷೆ ಉಳ್ಳವರಾಗಿದ್ದೇವೆ; ಈ ನಿರೀಕ್ಷೆ ಸಫಲವಾಗುವುದನ್ನು ಎದುರುನೋಡುತ್ತಿದ್ದೇವೆ.</verse>
				<verse number="6">ಕ್ರಿಸ್ತಯೇಸುವಿನಲ್ಲಿ ಬಾಳುವವರಿಗೆ ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ. ಪ್ರೀತಿಯಿಂದ ಕಾರ್ಯ ಎಸಗುವ ವಿಶ್ವಾಸವೇ ಪ್ರಮುಖವಾದುದು.</verse>
				<verse number="7">ಇದುವರೆಗೂ ನಿಮ್ಮ ಬದುಕಿನ ಓಟ ಚೆನ್ನಾಗಿ ಸಾಗುತ್ತಿತ್ತು. ಸತ್ಯಕ್ಕೆ ಶರಣರಾಗದಂತೆ ಈಗ ನಿಮ್ಮನ್ನು ತಡೆದವರು ಯಾರು?</verse>
				<verse number="8">ಹಾಗೆ ಅಡ್ಡಿಮಾಡಿದವರು, ನಿಮ್ಮನ್ನು ಕರೆದ ದೇವರೇನೂ ಅಲ್ಲ.</verse>
				<verse number="9">ಒಂದಿಷ್ಟು ಹುಳಿ ಸಾಕು, ಹಿಟ್ಟನ್ನೆಲ್ಲಾ ಹುದುಗೆಬ್ಬಿಸಲು!</verse>
				<verse number="10">ಭಿನ್ನಾಭಿಪ್ರಾಯಗಳಿಗೆ ನೀವು ಮಣಿಯುವುದಿಲ್ಲವೆಂದು ನಿಮ್ಮನ್ನು ಕುರಿತು ಪ್ರಭುವಿನಲ್ಲಿ ನನಗೆ ದೃಢವಾದ ನಂಬಿಕೆ ಇದೆ. ನಿಮ್ಮಲ್ಲಿ ಗೊಂದಲ ಎಬ್ಬಿಸುವವನು ಯಾರೇ ಆಗಿರಲಿ, ಅವನು ದೈವದಂಡನೆಗೆ ಗುರಿಯಾಗುತ್ತಾನೆ.</verse>
				<verse number="11">ಸಹೋದರರೇ, ಸುನ್ನತಿಮಾಡಿಸಿಕೊಳ್ಳುವುದು ಅವಶ್ಯಕವೆಂದು ನಾನು ಇನ್ನೂ ಬೋಧಿಸುತ್ತಿರುವುದಾಗಿ ಕೆಲವರು ಹೇಳುತ್ತಿದ್ದಾರಲ್ಲವೇ? ಹಾಗೆ ಬೋಧಿಸುತ್ತಿರುವುದಾದರೆ ನಾನೇಕೆ ಹೀಗೆ ಹಿಂಸೆಬಾಧೆಗಳನ್ನು ಅನುಭವಿಸಬೇಕಾಗುತ್ತಿತ್ತು? ನಾನು ಹಾಗೇನಾದರೂ ಬೋಧಿಸಿದ್ದರೆ, ಶಿಲುಬೆಯ ಸಂದೇಶದಿಂದ ಯಾವ ಅಡ್ಡಿ ಆತಂಕವೂ ಉಂಟಾಗುತ್ತಿರಲಿಲ್ಲ.</verse>
				<verse number="12">ನಿಮಗೆ ಕಿರುಕುಳ ಕೊಡುತ್ತಿರುವವರು ತಮ್ಮ ಅಂಗಚ್ಛೇದವನ್ನಾದರೂ ಮಾಡಿಕೊಂಡರೆ ಲೇಸು.</verse>
				<verse number="13">ಸಹೋದರರೇ, ನೀವು ಮುಕ್ತ ಸ್ವತಂತ್ರ ಜೀವನವನ್ನು ನಡೆಸಬೇಕೆಂದು ದೇವರು ನಿಮ್ಮನ್ನು ಕರೆದಿದ್ದಾರೆ. ಆದರೆ, ಆ ಸ್ವಾತಂತ್ರ್ಯವನ್ನು ದೈಹಿಕ ಬಯಕೆಗಳಿಗೆ ಸಾಧನವಾಗಿ ಮಾಡಿಕೊಳ್ಳಬೇಡಿ. ಬದಲಾಗಿ, ನೀವು ಒಬ್ಬರಿಗೊಬ್ಬರು ಪ್ರೀತಿಯಿಂದ ಸೇವೆಮಾಡಿರಿ.</verse>
				<verse number="14">“ನೀನು ನಿನ್ನನ್ನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವರನ್ನು ಪ್ರೀತಿಸು,” ಎಂಬ ಒಂದೇ ವಚನದಲ್ಲಿ ಇಡೀ ಧರ್ಮಶಾಸ್ತ್ರವು ಅಡಗಿದೆ.</verse>
				<verse number="15">ಆದರೆ ನೀವು ನಿಮ್ಮ ಕಚ್ಚಾಟ, ಕಿತ್ತಾಟ, ನುಂಗಾಟ - ಇವುಗಳನ್ನು ನಿಲ್ಲಿಸದಿದ್ದರೆ ಒಬ್ಬರಿಂದೊಬ್ಬರು ವಿನಾಶವಾದೀರಿ ಎಚ್ಚರಿಕೆ!</verse>
				<verse number="16">ನಾನು ಹೇಳುವುದೇನೆಂದರೆ: ನೀವು ಪವಿತ್ರಾತ್ಮರ ಪ್ರೇರಣೆಗನುಸಾರವಾಗಿ ನಡೆದುಕೊಳ್ಳಬೇಕು. ಆಗ, ದೈಹಿಕ ವ್ಯಾಮೋಹಕ್ಕೆ ನೀವು ಈಡಾಗಲಾರಿರಿ.</verse>
				<verse number="17">ಏಕೆಂದರೆ, ದೈಹಿಕ ವ್ಯಾಮೋಹವು ಪವಿತ್ರಾತ್ಮರಿಗೆ ವಿರುದ್ಧವಾಗಿದೆ. ಪವಿತ್ರಾತ್ಮ ಆ ವ್ಯಾಮೋಹಕ್ಕೆ ವಿರುದ್ಧವಾಗಿದ್ದಾರೆ. ಇವೆರಡೂ ಒಂದಕ್ಕೊಂದು ಕಾದಾಡುವುದರಿಂದ ನಿಮ್ಮ ಬಯಕೆ ಕೈಗೂಡುವುದಿಲ್ಲ.</verse>
				<verse number="18">ನೀವು ಪವಿತ್ರಾತ್ಮ ನಡೆಸುವ ಮಾರ್ಗದಲ್ಲಿ ನಡೆಯುವವರಾದರೆ, ಧರ್ಮಶಾಸ್ತ್ರದ ವಿಧಿನಿಯಮಗಳಿಗೆ ನೀವು ಅಧೀನರಲ್ಲ.</verse>
				<verse number="19">ದೈಹಿಕ ವ್ಯಾಮೋಹದ ದುಷ್ಪರಿಣಾಮಗಳು ತಿಳಿದೇ ಇವೆ: ಹಾದರ, ಅಶುದ್ಧತೆ, ಕಾಮುಕತನ,</verse>
				<verse number="20">ವಿಗ್ರಹಾರಾಧನೆ, ಮಾಟಮಂತ್ರ, ಹಗೆತನ, ಜಗಳ, ಹೊಟ್ಟೆಕಿಚ್ಚು, ಕ್ರೋಧ, ಸ್ವಾರ್ಥಭೇದ, ಪಕ್ಷಪಾತ, ಮತ್ಸರ, ಕುಡಿಕತನ, ದುಂದೌತಣ - ಇತ್ಯಾದಿಗಳು.</verse>
				<verse number="21">ಇಂಥ ಕೃತ್ಯಗಳನ್ನು ಮಾಡುವವರು ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ ಎಂದು ಈಗಾಗಲೇ ನಿಮ್ಮನ್ನು ಎಚ್ಚರಿಸಿದ್ದೇನೆ; ಈಗಲೂ ಎಚ್ಚರಿಸುತ್ತೇನೆ.</verse>
				<verse number="22">ಪವಿತ್ರಾತ್ಮದತ್ತವಾದ ಸತ್ಫಲಗಳು ಯಾವುವೆಂದರೆ: ಪ್ರೀತಿ, ಆನಂದ, ಶಾಂತಿಸಮಾಧಾನ, ಸಹನೆ, ದಯೆ, ಸದ್ಗುಣ, ಪ್ರಾಮಾಣಿಕತೆ, ಸೌಭಾಗ್ಯ, ಸಂಯಮ - ಇಂಥವುಗಳೇ.</verse>
				<verse number="23">ಇವುಗಳನ್ನು ಯಾವ ಧರ್ಮಶಾಸ್ತ್ರವೂ ಆಕ್ಷೇಪಿಸುವುದಿಲ್ಲ.</verse>
				<verse number="24">ಕ್ರಿಸ್ತಯೇಸುವಿಗೆ ಸೇರಿದ ಎಲ್ಲರೂ ತಮ್ಮ ದೈಹಿಕ ವ್ಯಾಮೋಹವನ್ನು ಅದರ ಆಶಾಪಾಶಗಳ ಹಾಗೂ ದುರಿಚ್ಛೆಗಳ ಸಮೇತ ಶಿಲುಬೆಗೆ ಜಡಿದುಬಿಟ್ಟಿದ್ದಾರೆ.</verse>
				<verse number="25">ಪವಿತ್ರಾತ್ಮ ನಮ್ಮ ಜೀವಾಳವಾಗಿದ್ದರೆ, ಅವರೇ ನಮ್ಮ ಜೀವನದ ಮಾರ್ಗದರ್ಶಿಯೂ ಆಗಿರಬೇಕು.</verse>
				<verse number="26">ನಾವು ಅಹಂಕಾರಿಗಳಾಗಿರಬಾರದು; ಒಬ್ಬರನ್ನೊಬ್ಬರು ಕೆಣಕಬಾರದು; ಒಬ್ಬರ ಮೇಲೊಬ್ಬರು ಹೊಟ್ಟೆಕಿಚ್ಚು ಪಡಬಾರದು.</verse>
			</chapter>
			<chapter number="6">
				<verse number="1">ಸಹೋದರರೇ, ನಿಮ್ಮಲ್ಲಿ ಯಾರಾದರೂ ತಪ್ಪಿತಸ್ಥರಾಗಿದ್ದರೆ, ಆಧ್ಯಾತ್ಮಿಕ ಜೀವಿಗಳಾದ ನೀವು ಅಂಥವನನ್ನು ನಯವಿನಯದಿಂದ ತಿದ್ದಿ ಸರಿಯಾದ ದಾರಿಗೆ ತರಬೇಕು. ಆದರೆ ನೀನೂ ಅವನಂತೆ ಪಾಪಪ್ರಚೋದನೆಗೆ ಒಳಗಾಗದಂತೆ ಎಚ್ಚರಿಕೆಯಿಂದಿರಬೇಕು.</verse>
				<verse number="2">ಒಬ್ಬರ ಭಾರವನ್ನು ಒಬ್ಬರು ಹೊತ್ತುಕೊಳ್ಳಿ. ಹೀಗೆ ಕ್ರಿಸ್ತಯೇಸುವಿನ ನಿಯಮವನ್ನು ನೆರವೇರಿಸುವಿರಿ.</verse>
				<verse number="3">ಅಲ್ಪನು ತಾನು ಶ್ರೇಷ್ಠನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ, ಅಷ್ಟೆ.</verse>
				<verse number="4">ಪ್ರತಿಯೊಬ್ಬನೂ ತನ್ನ ನಡತೆಯನ್ನು ತನ್ನಷ್ಟಕ್ಕೆ ತಾನೇ ಪರಿಶೋಧಿಸಿಕೊಳ್ಳಲಿ. ತನ್ನ ನಡತೆ ಒಳಿತಾಗಿದ್ದರೆ ಹೆಮ್ಮೆಪಡಲಿ. ಆದರೆ ಇತರರೊಂದಿಗೆ ಹೋಲಿಸಿ ಹೆಮ್ಮೆಪಡಬೇಕಾಗಿಲ್ಲ.</verse>
				<verse number="5">ಪ್ರತಿಯೊಬ್ಬನೂ ತನ್ನ ಹೊರೆಯನ್ನು ತಾನೇ ಹೊತ್ತುಕೊಳ್ಳಬೇಕು.</verse>
				<verse number="6">ದೇವರ ವಾಕ್ಯದ ಉಪದೇಶ ಪಡೆಯುವವನು ಉಪದೇಶ ಮಾಡುವವನೊಂದಿಗೆ ತನಗೆ ಇರುವ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.</verse>
				<verse number="7">ಮೋಸಹೋಗದಿರಿ, ದೇವರನ್ನು ವಂಚಿಸಬಹುದೆಂದು ಭಾವಿಸದಿರಿ; ಬಿತ್ತುವುದನ್ನೇ ಕೊಯ್ಯುತ್ತೇವೆ ಎಂಬುದನ್ನು ನೆನಪಿನಲ್ಲಿಡಿ.</verse>
				<verse number="8">ದೈಹಿಕ ವ್ಯಾಮೋಹವೆಂಬ ಸ್ವಭಾವದಲ್ಲಿ ಬಿತ್ತುವವನು ನಾಶವೆಂಬ ಫಲವನ್ನು ಕೊಯ್ಯುತ್ತಾನೆ. ಪವಿತ್ರಾತ್ಮ ಸ್ವಭಾವದಲ್ಲಿ ಬಿತ್ತುವವನು ಆತ್ಮದಿಂದ ನಿತ್ಯಜೀವವೆಂಬ ಫಲವನ್ನು ಕೊಯ್ಯುತ್ತಾನೆ.</verse>
				<verse number="9">ಸತ್ಕಾರ್ಯಗಳನ್ನು ಮಾಡುವುದರಲ್ಲಿ ಬೇಸರಪಡದಿರೋಣ, ಎದೆಗುಂದದಿರೋಣ; ಆಗ ಸೂಕ್ತಕಾಲದಲ್ಲಿ ಸತ್ಫಲವನ್ನು ಕೊಯ್ಯುವೆವು.</verse>
				<verse number="10">ಎಂದೇ ಸಮಯಸಂದರ್ಭಗಳು ಇರುವಾಗಲೇ ಸರ್ವರಿಗೂ ಉಪಕಾರಮಾಡೋಣ. ಅದರಲ್ಲೂ ಮುಖ್ಯವಾಗಿ, ಒಂದೇ ಕುಟುಂಬದವರಂತೆ ಇರುವ ಕ್ರೈಸ್ತವಿಶ್ವಾಸಿಗಳಿಗೆ ಉಪಕಾರ ಮಾಡೋಣ.</verse>
				<verse number="11">ಈ ದೊಡ್ಡದೊಡ್ಡ ಅಕ್ಷರಗಳನ್ನು ನೋಡಿರಿ; ಇವನ್ನು ನನ್ನ ಸ್ವಂತ ಕೈಯಿಂದಲೇ ಬರೆಯುತ್ತಿದ್ದೇನೆ.</verse>
				<verse number="12">ಬಾಹ್ಯಾಚಾರಗಳಿಂದ ತಾವು ಒಳ್ಳೆಯವರು ಎನಿಸಿಕೊಳ್ಳಬೇಕೆನ್ನುವವರು ನೀವು ಸುನ್ನತಿಮಾಡಿಸಿಕೊಳ್ಳಬೇಕೆಂದು ಬಲಾತ್ಕಾರ ಮಾಡುತ್ತಿದ್ದಾರೆ. ಕ್ರಿಸ್ತಯೇಸುವಿನ ಶಿಲುಬೆಯ ನಿಮಿತ್ತ ತಮಗೆ ಹಿಂಸೆಬಾಧೆಗಳು ಉಂಟಾಗಬಾರದು ಎಂಬುದೇ ಅವರ ಉದ್ದೇಶವಾಗಿದೆ.</verse>
				<verse number="13">ಸುನ್ನತಿಮಾಡಿಸಿಕೊಳ್ಳುವ ತಾವಾದರೂ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವುದಿಲ್ಲ. ಆದರೆ ನಿಮ್ಮ ದೈಹಿಕ ಸುನ್ನತಿಯಿಂದ, ಅವರು ಹೆಚ್ಚಳಿಕೆ ಗಳಿಸುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಬಯಸುತ್ತಾರೆ.</verse>
				<verse number="14">ನನಗಾದರೋ ನಮ್ಮ ಪ್ರಭು ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಬೇರಾವುದರಲ್ಲೂ ಹೆಚ್ಚಳಪಡುವುದು ಬೇಡವೇ ಬೇಡ. ಆ ಶಿಲುಬೆಯ ಮೂಲಕ. ನನ್ನ ಪಾಲಿಗೆ ಲೋಕವೇ ಶಿಲುಬೆಗೆ ಜಡಿಸಿಕೊಂಡು ಸತ್ತಿದೆ; ನಾನೂ ಸಹ ಲೋಕದ ಪಾಲಿಗೆ ಶಿಲುಬೆಗೆ ಜಡಿಸಿಕೊಂಡು ಸತ್ತಿದ್ದೇನೆ.</verse>
				<verse number="15">ಸುನ್ನತಿ ಮಾಡಿಸಿಕೊಳ್ಳುವುದೋ, ಮಾಡಿಸಿಕೊಳ್ಳದಿರುವುದೋ ಮಹತ್ತಾದುದಲ್ಲ. ಹೊಸ ಸೃಷ್ಟಿಯಾಗುವುದೇ ಮಹತ್ತರವಾದುದು.</verse>
				<verse number="16">ಈ ನಿಯಮವನ್ನು ಅನುಸರಿಸುವ ಎಲ್ಲರಿಗೂ, ಅಂದರೆ ನಿಜ ಇಸ್ರಯೇಲರಾದ ದೇವಜನರೆಲ್ಲರಿಗೂ ಶಾಂತಿಸಮಾಧಾನವೂ ಕೃಪಾಶೀರ್ವಾದವೂ ಲಭಿಸಲಿ!</verse>
				<verse number="17">ಇನ್ನು ಮೇಲೆ ಯಾರೂ ನನಗೆ ತೊಂದರೆ ಕೊಡದಿರಲಿ. ಯೇಸುವಿನ ದಾಸನೆಂದು ಸೂಚಿಸುವ ಕೆಂಗುರುತುಗಳು ನನ್ನ ದೇಹದಲ್ಲಿ ಮುದ್ರಿತವಾಗಿವೆ.</verse>
				<verse number="18">ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೊಡನೆ ಇರಲಿ! ಆಮೆನ್.</verse>
			</chapter>
		</book>
		<book number="49">
			<chapter number="1">
				<verse number="1">ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಎಫೆಸದ ದೇವಜನರಿಗೆ - ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಿ ನೇಮಕಗೊಂಡ ಪೌಲನು ಬರೆಯುವ ಪತ್ರ.</verse>
				<verse number="2">ಪಿತನಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!</verse>
				<verse number="3">ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.</verse>
				<verse number="4">ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು.</verse>
				<verse number="5">ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧರಿಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು.</verse>
				<verse number="6">ತಮ್ಮ ಪ್ರೀತಿಯ ಪುತ್ರನಲ್ಲೇ ಅವರು ನಮಗೆ ಉಚಿತವಾಗಿ ಅನುಗ್ರಹಿಸಿರುವ ಅತಿಶಯ ವರಪ್ರಸಾದಕ್ಕಾಗಿ ಅವರಿಗೆ ಸ್ತುತಿಸಲ್ಲಿಸೋಣ.</verse>
				<verse number="7">ಯೇಸುಕ್ರಿಸ್ತರು ಸುರಿಸಿದ ರಕ್ತಧಾರೆಯ ಮೂಲಕ ನಮಗೆ ಪಾಪಕ್ಷಮೆ ದೊರಕಿತು; ವಿಮೋಚನೆಯೂ ಲಭಿಸಿತು. ಇದು ದೇವರ ಅನುಗ್ರಹದ ಶ್ರೀಮಂತಿಕೆಯೇ ಸರಿ. ಇದನ್ನು ನಮ್ಮ ಮೇಲೆ ಅವರು ಯಥೇಚ್ಛವಾಗಿ ಸುರಿಸಿದ್ದಾರೆ.</verse>
				<verse number="8"></verse>
				<verse number="9">ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು.</verse>
				<verse number="10">ಕಾಲವು ಸಂಪೂರ್ಣಗೊಂಡಾಗ ಇಹಪರಗಳಲ್ಲಿರುವ ಸಮಸ್ತವನ್ನು ಕ್ರಿಸ್ತಯೇಸುವಿನಲ್ಲಿ ಒಂದುಗೂಡಿಸುವುದೇ ಈ ಯೋಜನೆಯ ಇಂಗಿತ:</verse>
				<verse number="11">ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.</verse>
				<verse number="12">ಆದಕಾರಣ ಯೇಸುಕ್ರಿಸ್ತರಲ್ಲಿ ಮೊತ್ತಮೊದಲು ನಿರೀಕ್ಷೆಯನ್ನಿರಿಸಿದ ನಾವು ದೇವರ ಮಹಿಮೆಯನ್ನು ಸ್ತುತಿಸಿ ಹಾಡಬೇಕು.</verse>
				<verse number="13">ನೀವು ಸಹ ಸತ್ಯವಾಕ್ಯವನ್ನು ಅಂದರೆ, ನಿಮಗೆ ಜೀವೋದ್ಧಾರವನ್ನೀಯುವ ಶುಭಸಂದೇಶವನ್ನು ಕೇಳಿ ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಟ್ಟಿರಿ. ದೇವರು ವಾಗ್ದಾನಮಾಡಿದ ಪವಿತ್ರಾತ್ಮ ಅವರಿಂದ ಮುದ್ರಿತರಾದಿರಿ.</verse>
				<verse number="14">ಹೀಗೆ ದೇವರಿಗೆ ಸೇರಿದವರು ವಿಮೋಚನೆ ಹೊಂದಿ ಸ್ವರ್ಗೀಯ ಸ್ವಾಸ್ತ್ಯಕ್ಕೆ ಬಾಧ್ಯರಾಗಲು ಆ ಪವಿತ್ರಾತ್ಮರೇ ಆಧಾರ. ಈ ಕಾರಣ ದೇವರಿಗೆ ಮಹಿಮೆ ಸಲ್ಲಲಿ.</verse>
				<verse number="15">ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ವಿಶ್ವಾಸ ಹಾಗೂ ದೇವಜನರೆಲ್ಲರ ಮೇಲೆ ನಿಮಗಿರುವ ಪ್ರೀತಿಯನ್ನು ಕುರಿತು ಕೇಳಿದ್ದೇನೆ. ಅಂದಿನಿಂದ ನಿಮ್ಮ ಸಲುವಾಗಿ ದೇವರಿಗೆ ಸದಾ ಕೃತಜ್ಞತಾಸ್ತುತಿ ಸಲ್ಲಿಸಿ, ನನ್ನ ಪ್ರಾರ್ಥನೆಯಲ್ಲಿ ನಿಮ್ಮನ್ನು ಸ್ಮರಿಸಿಕೊಳ್ಳುತ್ತಿದ್ದೇನೆ.</verse>
				<verse number="16"></verse>
				<verse number="17">ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.</verse>
				<verse number="18">ದೇವರು ನಿಮ್ಮ ಮನೋನೇತ್ರಗಳನ್ನು ತೆರೆಯಲಿ; ಅವರ ಬೆಳಕು ನಿಮಗೆ ಕಾಣುವಂತೆ ಆಗಲಿ. ಹೀಗೆ, ಅವರು ಕರೆದಿರುವ ಜನರಿಗೆ ಲಭಿಸುವ ಭರವಸೆಯ ಭಾಗ್ಯ ಎಂಥದ್ದೆಂದೂ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯ ಸಂಪತ್ತು ಎಂಥದ್ದೆಂದೂ ನೀವು ಅರಿತುಕೊಳ್ಳಬೇಕು.</verse>
				<verse number="19">ಕ್ರೈಸ್ತವಿಶ್ವಾಸಿಗಳಾದ ನಮ್ಮಲ್ಲಿ ದೇವರು ಸಾಧಿಸಿರುವ ಮಹತ್ಕಾರ್ಯಗಳು ಎಷ್ಟು ಶಕ್ತಿಯುತವಾದುವು ಎಂಬುದು ನಿಮಗೆ ಮನದಟ್ಟಾಗಬೇಕು.</verse>
				<verse number="20">ಈ ಮಹಿಮಾಶಕ್ತಿಯಿಂದಲೇ ದೇವರು ಯೇಸುಕ್ರಿಸ್ತರನ್ನು ಮರಣದಿಂದ ಎಬ್ಬಿಸಿದರು; ಸಕಲ ಅಧಿಕಾರ, ಆಧಿಪತ್ಯ, ಪ್ರಭಾವ ಮತ್ತು ಪ್ರಭುತ್ವ ಇವೆಲ್ಲವುಗಳ ಮೇಲೆ ಯೆಸುಕ್ರಿಸ್ತರೇ ಆಡಳಿತ ನಡೆಸುವಂತೆ ಸ್ವರ್ಗಲೋಕದಲ್ಲಿ ಅವರನ್ನು ತಮ್ಮ ಬಲಗಡೆಯಲ್ಲಿ ಆಸೀನರಾಗಿಸಿದ್ದಾರೆ. ಹೀಗೆ ಇಹದಲ್ಲೂ ಪರದಲ್ಲೂ ಕೀರ್ತಿ ಗಳಿಸಿದವರೆಲ್ಲರಿಗಿಂತಲೂ ಯೇಸುಕ್ರಿಸ್ತರ ಮಹಿಮೆಯೇ ಸರ್ವಶ್ರೇಷ್ಠವಾದುದು.</verse>
				<verse number="21"></verse>
				<verse number="22">ದೇವರು ಸಮಸ್ತವನ್ನು ಯೇಸುಕ್ರಿಸ್ತರ ಪಾದದಡಿಯಲ್ಲಿರಿಸಿ, ಅವರನ್ನು ಧರ್ಮಸಭೆಯ ಶಿರಸ್ಸನ್ನಾಗಿ ನೇಮಿಸಿದ್ದಾರೆ.</verse>
				<verse number="23">ಧರ್ಮಸಭೆಯೇ ಯೇಸುಕ್ರಿಸ್ತರ ದೇಹ. ಎಲ್ಲವನ್ನೂ ಎಲ್ಲಾ ವಿಧದಲ್ಲೂ ಪೂರೈಸುವಾತನಿಂದ ಅದು ಪರಿಪೂರ್ಣ ಉಳ್ಳದ್ದಾಗಿದೆ.</verse>
			</chapter>
			<chapter number="2">
				<verse number="1">ನಿಮ್ಮ ಅಪರಾಧಗಳ ಹಾಗೂ ಪಾಪಗಳ ದೆಸೆಯಿಂದ ಹಿಂದೊಮ್ಮೆ ನೀವು ಆಧ್ಯಾತ್ಮಿಕವಾಗಿ ಮೃತರಾಗಿದ್ದಿರಿ.</verse>
				<verse number="2">ಆಗ ನೀವು ಲೋಕದ ರೀತಿನೀತಿಗಳನ್ನು ಅನುಸರಿಸಿ ಬಾಳಿದಿರಿ. ವಾಯುಮಂಡಲದಲ್ಲಿನ ಅಶರೀರ ಶಕ್ತಿಗಳ ಅಧಿಪತಿಗೆ ಅಧೀನರಾಗಿದ್ದಿರಿ. ದುಷ್ಕರ್ಮಿಗಳನ್ನು ಪ್ರಚೋದಿಸುತ್ತಲಿರುವ ದುರಾತ್ಮನಿಗೆ ವಿಧೇಯರಾಗಿದ್ದಿರಿ.</verse>
				<verse number="3">ವಾಸ್ತವವಾಗಿ ಹಿಂದೊಮ್ಮೆ ನಾವೆಲ್ಲರು ಸಹ ಹಾಗೆಯೇ ಇದ್ದೆವು. ಶಾರೀರಿಕ ಆಶೆಆಮಿಷಗಳಿಗೆ ತುತ್ತಾಗಿದ್ದೆವು; ಮಾನಸಿಕ ಹಾಗೂ ಶಾರೀರಿಕ ದುರಿಚ್ಛೆಗಳನ್ನೇ ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೈವಕೋಪಕ್ಕೆ ಗುರಿಯಾಗಿದ್ದೆವು.</verse>
				<verse number="4">ಆದರೆ ಕರುಣಾಮಯ ದೇವರು ನಮ್ಮನ್ನು ಅಪಾರವಾಗಿ ಪ್ರೀತಿಸಿ,</verse>
				<verse number="5">ನಮ್ಮ ಅಪರಾಧಗಳ ನಿಮಿತ್ತ ಆಧ್ಯಾತ್ಮಿಕವಾಗಿ ಮೃತರಾಗಿದ್ದ ನಮ್ಮನ್ನು ಕ್ರಿಸ್ತಯೇಸುವಿನೊಡನೆ ಜೀವಂತರನ್ನಾಗಿ ಮಾಡಿದರು. (ದೈವಾನುಗ್ರಹದಿಂದಲೇ ನೀವೀಗ ಜೀವೋದ್ಧಾರ ಹೊಂದಿದ್ದೀರಿ).</verse>
				<verse number="6">ಯೇಸುಕ್ರಿಸ್ತರೊಡನೆ ನಮ್ಮನ್ನೂ ಎಬ್ಬಿಸಿ, ಸ್ವರ್ಗಲೋಕದಲ್ಲಿ ಅವರ ಸನ್ನಿಧಿಯಲ್ಲಿಯೇ ಮಂಡಿಸುವ ಅವಕಾಶ ಮಾಡಿಕೊಟ್ಟರು.</verse>
				<verse number="7">ದೇವರು ಯೇಸುಕ್ರಿಸ್ತರಲ್ಲಿ ನಮಗೆ ತೋರಿದ ದಯೆಯ ಮೂಲಕ ತಮ್ಮ ಅನುಗ್ರಹದ ಶ್ರೀಮಂತಿಕೆಯನ್ನು ಮುಂದಣ ಯುಗಗಳಲ್ಲಿ ತಿಳಿಯಪಡಿಸುವುದೇ ಅವರ ಉದ್ದೇಶವಾಗಿತ್ತು.</verse>
				<verse number="8">ದೈವಾನುಗ್ರಹದಿಂದಲೇ ನೀವು ವಿಶ್ವಾಸದ ಮೂಲಕ ಜೀವೋದ್ಧಾರ ಹೊಂದಿದ್ದೀರಿ. ಇದು ನಿಮ್ಮ ಪ್ರಯತ್ನದ ಫಲವಲ್ಲ; ದೇವರಿತ್ತ ವರಪ್ರಸಾದ.</verse>
				<verse number="9">ಇದು ಮಾನವರ ಪುಣ್ಯಕಾರ್ಯಗಳ ಪರಿಣಾಮವೂ ಅಲ್ಲ. ಆದುದರಿಂದ ಯಾರೂ ಹೆಮ್ಮೆಪಡಲು ಆಸ್ಪದವಿಲ್ಲ.</verse>
				<verse number="10">ನಾವಾದರೋ ದೇವರ ಕಲಾಕೃತಿಗಳು. ಕ್ರಿಸ್ತಯೇಸುವಿನಲ್ಲಿ ನಾವು ಸತ್ಕಾರ್ಯಗಳನ್ನು ಮಾಡುತ್ತಾ ಬಾಳಬೇಕೆಂದು ತಾವು ಮೊದಲೇ ನಿರ್ಣಯಿಸಿದ್ದಂತೆ ದೇವರು ನಮ್ಮನ್ನು ಸೃಷ್ಟಿಸಿದ್ದಾರೆ.</verse>
				<verse number="11">ಹಿಂದೊಮ್ಮೆ ನೀವು ಅನ್ಯಜನರಾಗಿದ್ದಿರಿ ಎಂಬುದು ನಿಮ್ಮ ನೆನಪಿನಲ್ಲಿರಲಿ; ಆಗ ಶಾರೀರಿಕ ಸುನ್ನತಿ ಪಡೆದವರು ನಿಮ್ಮನ್ನು ‘ಸುನ್ನತಿಯಿಲ್ಲದವರು’ ಎಂದು ತುಚ್ಛೀಕರಿಸಿ ಕರೆಯುತ್ತಿದ್ದರು.</verse>
				<verse number="12">ಆಗ ನೀವು ಯೇಸುಕ್ರಿಸ್ತರಿಂದ ದೂರವಿದ್ದಿರಿ; ದೇವರು ಆಯ್ದುಕೊಂಡ ಜನಾಂಗಕ್ಕೆ ಸೇರದೆ ಪರಕೀಯರಾಗಿದ್ದಿರಿ; ದೇವರು ತಮ್ಮ ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆಯಲ್ಲಿ ಪಾಲಿಲ್ಲದವರಾಗಿದ್ದಿರಿ; ನಂಬಿಕೆ ನಿರೀಕ್ಷೆ ಇಲ್ಲದೆ ಬಾಳಿದಿರಿ ಮತ್ತು ದೇವರಿಲ್ಲದವರಂತೆ ಲೋಕದಲ್ಲಿ ಬದುಕಿದಿರಿ.</verse>
				<verse number="13">ಹೀಗೆ ಹಿಂದೊಮ್ಮೆ ದೇವರಿಂದ ದೂರವಾಗಿದ್ದ ನಿಮ್ಮನ್ನು ಕ್ರಿಸ್ತಯೇಸು ಸುರಿಸಿದ ರಕ್ತದ ಮೂಲಕ ದೇವರ ಹತ್ತಿರಕ್ಕೆ ತರಲಾಯಿತು.</verse>
				<verse number="14">ಯೇಸುಕ್ರಿಸ್ತರೇ ನಮ್ಮ ಶಾಂತಿದಾತ. ನಿಮ್ಮನ್ನೂ ನಮ್ಮನ್ನೂ ಒಂದುಗೂಡಿಸಿದವರು ಅವರೇ. ನಮ್ಮೀರ್ವರನ್ನು ಪ್ರತ್ಯೇಕಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತಮ್ಮ ಶರೀರದಿಂದಲೇ ಕೆಡವಿಹಾಕಿದ್ದಾರೆ.</verse>
				<verse number="15">ವಿಧಿನಿಯಮಗಳಿಂದ ಕೂಡಿದ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿದ್ದಾರೆ. ಉಭಯರನ್ನು ಒಂದುಗೂಡಿಸಿ, ಶಾಂತಿ ಸಮಾಧಾನವನ್ನೇರ್ಪಡಿಸಿ, ನೂತನ ಮಾನವನನ್ನಾಗಿ ಪರಿವರ್ತಿಸಿದ್ದಾರೆ.</verse>
				<verse number="16">ತಮ್ಮ ಶಿಲುಬೆಯ ಮರಣದ ಮೂಲಕ ಹಗೆತನವನ್ನು ನಿರ್ಮೂಲಗೊಳಿಸಿ ಉಭಯತ್ರರನ್ನು ಒಂದೇ ದೇಹದಂತೆ ಮಾಡಿ ದೇವರೊಂದಿಗೆ ಸಂಧಾನಗೊಳಿಸಿದ್ದಾರೆ.</verse>
				<verse number="17">ಯೇಸುಕ್ರಿಸ್ತರು ಬಂದು ದೇವರಿಂದ ದೂರವಾಗಿದ್ದ ನಿಮಗೂ ಹತ್ತಿರವಾಗಿದ್ದ ನಮಗೂ ಶಾಂತಿಯ ಸಂದೇಶವನ್ನು ಸಾರಿದರು.</verse>
				<verse number="18">ಇದರ ಪರಿಣಾಮವಾಗಿ ಅವರ ಮುಖಾಂತರವೇ ಉಭಯತ್ರರು ಒಂದೇ ಪವಿತ್ರಾತ್ಮ ಅವರಲ್ಲಿ ಪಿತನ ಸಾನ್ನಿಧ್ಯವನ್ನು ಸೇರಲು ಮಾರ್ಗವಾಯಿತು.</verse>
				<verse number="19">ಹೀಗಿರಲಾಗಿ, ನೀವು ಇನ್ನು ಮೇಲೆ ಪರಕೀಯರೂ ಪರದೇಶಿಗಳೂ ಆಗಿರದೆ, ದೇವಜನರೊಂದಿಗೆ ಸಹಜೀವಿಗಳು ಮತ್ತು ದೇವರ ಮನೆತನದವರು ಆಗಿದ್ದೀರಿ.</verse>
				<verse number="20">ಪ್ರೇಷಿತರು ಹಾಗೂ ಪ್ರವಾದಿಗಳೂ ಹಾಕಿದ ತಳಹದಿಯ ಮೇಲೆ ನಿಮ್ಮನ್ನು ನಿರ್ಮಿಸಲಾಗಿದೆ. ಯೇಸುಕ್ರಿಸ್ತರೇ ಈ ತಳಹದಿಯ ಮುಖ್ಯಮೂಲೆಗಲ್ಲು.</verse>
				<verse number="21">ಇಡೀ ಕಟ್ಟಡವು ಅವರನ್ನೇ ಆಧರಿಸಿ, ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ನಿಂತು, ಪ್ರಭುವಿಗೆ ಅರ್ಪಿತವಾದ ದೇವಮಂದಿರ ಆಗುತ್ತದೆ.</verse>
				<verse number="22">ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನೀವು ಸಹ ಇತರರೆಲ್ಲರೊಡನೆ ದೇವರ ನಿವಾಸಕ್ಕೆ ತಕ್ಕ ಮಂದಿರವಾಗಿ ಪವಿತ್ರಾತ್ಮ ಅವರಿಂದ ಕಟ್ಟಲ್ಪಡುತ್ತಿದ್ದೀರಿ.</verse>
			</chapter>
			<chapter number="3">
				<verse number="1">ಅನ್ಯಜನರಾದ ನಿಮ್ಮ ನಿಮಿತ್ತ ಯೇಸುಕ್ರಿಸ್ತರ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:</verse>
				<verse number="2">ದೇವರು ತಮ್ಮ ಕೃಪಾತಿಶಯದ ಬಗ್ಗೆ ಸಾರುವ ಹೊಣೆಯನ್ನು ನಿಮ್ಮ ಸಲುವಾಗಿ ನನಗೆ ಕೊಟ್ಟಿರುತ್ತಾರೆಂಬುದನ್ನು ನೀವೇ ಬಲ್ಲಿರಿ.</verse>
				<verse number="3">ದೇವರು ತಮ್ಮ ನಿಗೂಢ ಯೋಜನೆಯನ್ನು ನನಗೆ ಪ್ರಕಟಗೊಳಿಸಿದ್ದಾರೆ. ಇದರ ಬಗ್ಗೆ ನಾನು ಮೊದಲೇ ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.</verse>
				<verse number="4">ಅದನ್ನು ಲಕ್ಷ್ಯವಿಟ್ಟು ಓದಿದರೆ, ಆಗ ಯೇಸುಕ್ರಿಸ್ತರ ರಹಸ್ಯವನ್ನು ಎಷ್ಟರಮಟ್ಟಿಗೆ ನಾನು ಮನಗಂಡಿದ್ದೇನೆ ಎಂದು ನಿಮಗೇ ತಿಳಿಯುತ್ತದೆ.</verse>
				<verse number="5">ಹಿಂದಿನ ಕಾಲದವರಿಗೆ ಈ ರಹಸ್ಯವನ್ನು ತಿಳಿಸಿರಲಿಲ್ಲ. ಆದರೆ ಈಗ ದೇವರು ಪವಿತ್ರಾತ್ಮರ ಮುಖಾಂತರ ಪೂಜ್ಯಪ್ರೇಷಿತರಿಗೂ ಪ್ರವಾದಿಗಳಿಗೂ ಅದನ್ನು ಪ್ರಕಟಿಸಿದ್ದಾರೆ.</verse>
				<verse number="6">ಶುಭಸಂದೇಶದ ಮೂಲಕ ಅನ್ಯಜನರೂ ಯೇಸುಕ್ರಿಸ್ತರಲ್ಲಿ ದೇವಜನರೊಡನೆ ಸಹಬಾಧ್ಯರು, ಹಕ್ಕುದಾರರು, ಒಂದೇ ಶರೀರದ ಅಂಗಗಳು, ಹಾಗೂ ದೇವರು ಮಾಡಿದ ವಾಗ್ದಾನದಲ್ಲಿ ಪಾಲುಗಾರರು ಇದೇ ಆ ರಹಸ್ಯ.</verse>
				<verse number="7">ಈ ಶುಭಸಂದೇಶಕ್ಕೆ ದಾಸನನ್ನಾಗಿ ದೇವರು ನನ್ನನ್ನು ನೇಮಿಸಿದ್ದಾರೆ. ತಮ್ಮ ಪ್ರಭಾವಮಯ ಶಕ್ತಿಯಿಂದ ಈ ವಿಶೇಷ ವರವನ್ನು ಉಚಿತವಾಗಿ ನನಗೆ ದಯಪಾಲಿಸಿದ್ದಾರೆ.</verse>
				<verse number="8">ದೇವಜನರಲ್ಲೆಲ್ಲ ನಾನು ಅತ್ಯಲ್ಪನು. ಆದರೂ ಯೇಸುಕ್ರಿಸ್ತರ ಅಪರಿಮಿತ ಆಧ್ಯಾತ್ಮಿಕ ಸಿರಿಸಂಪತ್ತಿನ ಬಗ್ಗೆ ಅನ್ಯಜನರಿಗೆ ಪ್ರಬೋಧಿಸುವ ಸೌಭಾಗ್ಯ ನನ್ನದಾಯಿತು.</verse>
				<verse number="9">ಸಮಸ್ತವನ್ನು ಸೃಷ್ಟಿಸಿದ ದೇವರು ಆದಿಯಿಂದಲೂ ಗುಪ್ತವಾಗಿಟ್ಟಿದ್ದ ತಮ್ಮ ಯೋಜನೆಯನ್ನು ಈಡೇರಿಸುವ ವಿಧಾನವನ್ನು ಸರ್ವಜನರಿಗೆ ತಿಳಿಯಪಡಿಸುವುದಕ್ಕಾಗಿ ನನ್ನನ್ನು ಆರಿಸಿಕೊಂಡಿರುವರು.</verse>
				<verse number="10">ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು.</verse>
				<verse number="11">ತಮ್ಮ ಪೂರ್ವಸಂಕಲ್ಪದಂತೆಯೇ ಇದನ್ನು ದೇವರು ನಮ್ಮ ಪ್ರಭುವಾದ ಯೇಸುಕ್ರಿಸ್ತರಲ್ಲಿ ಕಾರ್ಯಗತಗೊಳಿಸಿದರು.</verse>
				<verse number="12">ಯೇಸುಕ್ರಿಸ್ತರಲ್ಲಿ ನಾವಿಟ್ಟಿರುವ ವಿಶ್ವಾಸದ ಮೂಲಕ ಅವರಲ್ಲಿ ಒಂದಾಗಿ, ದೇವರ ಸಾನ್ನಿಧ್ಯವನ್ನು ಸೇರುವ ಧೈರ್ಯ ಹಾಗೂ ಭರವಸೆ ನಮಗಿದೆ.</verse>
				<verse number="13">ಆದುದರಿಂದ ನಿಮಗಾಗಿ ನಾನು ಸಹಿಸುತ್ತಿರುವ ಸಂಕಟಗಳನ್ನು ನೆನೆದು ಎದೆಗುಂದದಿರಿ. ಇದೆಲ್ಲವೂ ನಿಮ್ಮ ಯಶಸ್ವಿಗಾಗಿಯೇ ಎಂಬುದನ್ನು ಮರೆಯದಿರಿ.</verse>
				<verse number="14">ಈ ಕಾರಣ ನಾನು ಮೊಣಕಾಲೂರಿ ಪಿತನಲ್ಲಿ ಪ್ರಾರ್ಥಿಸುತ್ತೇನೆ:</verse>
				<verse number="15">ಸ್ವರ್ಗಲೋಕದಲ್ಲೂ ಭೂಲೋಕದಲ್ಲೂ ಪ್ರತಿ ಕುಟುಂಬವು ತನ್ನ ಹೆಸರನ್ನು ಪಡೆದಿರುವುದು ಅವರಿಂದಲೇ.</verse>
				<verse number="16">ಅವರು ತಮ್ಮ ಮಹಿಮೆಯ ಸಂಪನ್ಮೂಲಗಳಿಂದ ಪವಿತ್ರಾತ್ಮ ಅವರ ಮುಖಾಂತರ ನಿಮ್ಮ ಅಂತರಂಗವನ್ನು ಬಲಗೊಳಿಸಲಿ;</verse>
				<verse number="17">ನಿಮ್ಮ ವಿಶ್ವಾಸದ ಫಲವಾಗಿ, ಯೇಸುಕ್ರಿಸ್ತರು ನಿಮ್ಮ ಹೃದಯಗಳಲ್ಲಿ ಸದಾ ವಾಸಿಸಲಿ ಮತ್ತು ನಿಮ್ಮ ಜೀವನವು ಪ್ರೀತಿಯಲ್ಲಿ ಬೇರೂರಿ ಸದೃಢವಾಗಿ ನಿಲ್ಲಲಿ.</verse>
				<verse number="18">ಹೀಗೆ ದೇವಜನರೆಲ್ಲರೊಡನೆ, ಕ್ರಿಸ್ತಯೇಸುವಿನ ಅಗಾಧ ಪ್ರೀತಿಯ ಉದ್ದ-ಅಗಲ, ಆಳ-ಎತ್ತರ ಎಷ್ಟೆಂಬುದನ್ನು ನೀವು ಗ್ರಹಿಸಿಕೊಳ್ಳುವಂತಾಗಲಿ.</verse>
				<verse number="19">ಹೌದು, ಜ್ಞಾನವನ್ನು ಮೀರಿದ ಈ ಪ್ರೀತಿಯನ್ನು ಅರಿತುಕೊಳ್ಳಲು ಆಸಕ್ತರಾಗಬೇಕು, ದೇವರ ಪರಿಪೂರ್ಣತೆಯಿಂದ ತುಂಬಿದವರಾಗಬೇಕು ಎಂದು ನಾನು ಬೇಡಿಕೊಳ್ಳುತ್ತೇನೆ.</verse>
				<verse number="20">ನಮ್ಮಲ್ಲಿ ಕಾರ್ಯಸಾಧಿಸುವ ಹಾಗೂ ನಮ್ಮ ಆಶೆ-ಆಕಾಂಕ್ಷೆಗಿಂತಲೂ ಬೇಡಿಕೆ-ಕೋರಿಕೆಗಿಂತಲೂ ಅಧಿಕವಾದುದನ್ನು ಮಾಡಲು ದೇವರು ಶಕ್ತರು. ಅವರಿಗೆ ಧರ್ಮಸಭೆಯಲ್ಲೂ ಕ್ರಿಸ್ತಯೇಸುವಿನಲ್ಲೂ ಯುಗಯುಗಾಂತರಕ್ಕೂ ತಲತಲಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.</verse>
			</chapter>
			<chapter number="4">
				<verse number="1">ಪ್ರಭುವಿನ ಸೇವೆಯ ನಿಮಿತ್ತ ಸೆರೆಯಾಳಾಗಿ ಇರುವ ನಾನು ನಿಮ್ಮಲ್ಲಿ ಬಿನ್ನವಿಸುವುದು ಏನೆಂದರೆ: ದೇವರ ಕರೆಗೆ ಅನುಗುಣವಾಗಿ ಯೋಗ್ಯ ಬಾಳುವೆ ನಡೆಸಿರಿ.</verse>
				<verse number="2">ಯಾವಾಗಲೂ ದೀನದಯಾಳತೆ, ವಿನಯಶೀಲತೆ ಹಾಗೂ ಶಾಂತಿಸಮಾಧಾನವುಳ್ಳವರಾಗಿರಿ. ಪರಸ್ಪರ ಪ್ರೀತಿಯಿಂದಲೂ ಸಹನೆಯಿಂದಲೂ ವರ್ತಿಸಿರಿ.</verse>
				<verse number="3">ಪವಿತ್ರಾತ್ಮರಿಂದ ಉಂಟಾಗುವ ಐಕ್ಯತೆಯನ್ನು ಕಾಪಾಡಿಕೊಳ್ಳಲು ಆಸಕ್ತರಾಗಿರಿ. ಅದು ನಿಮ್ಮನ್ನು ಸಮಾಧಾನದಲ್ಲಿ ಬಂಧಿಸುವುದು.</verse>
				<verse number="4">ನೀವೆಲ್ಲರೂ ಒಂದೇ ಶರೀರಕ್ಕೆ ಸೇರಿದವರು; ಒಬ್ಬರೇ ಪವಿತ್ರಾತ್ಮರನ್ನು ಪಡೆದವರು; ಒಂದೇ ನಿರೀಕ್ಷೆಗಾಗಿ ಕರೆಹೊಂದಿದವರು.</verse>
				<verse number="5">ನಮ್ಮೆಲ್ಲರಿಗೂ ಪ್ರಭು ಒಬ್ಬರೇ; ವಿಶ್ವಾಸವೂ ಒಂದೇ; ದೀಕ್ಷಾಸ್ನಾನವೂ ಒಂದೇ.</verse>
				<verse number="6">ದೇವರು ಒಬ್ಬರೇ, ಸರ್ವರ ತಂದೆಯು ಅವರೇ; ಸರ್ವಶ್ರೇಷ್ಠರೂ ಅವರೇ; ಸರ್ವರ ಮೂಲಕ ಕಾರ್ಯ ನಿರ್ವಹಿಸುವವರೂ ಅವರೇ ಮತ್ತು ಸಮಸ್ತರಲ್ಲಿ ವಾಸಿಸುವವರೂ ಅವರೇ.</verse>
				<verse number="7">ಆದರೂ ನಮ್ಮಲ್ಲಿ ಪ್ರತಿಯೊಬ್ಬನೂ ಕ್ರಿಸ್ತಯೇಸು ಅನುಗ್ರಹಿಸುವ ಪ್ರಕಾರವೇ ವರಗಳನ್ನು ಪಡೆದಿದ್ದಾನೆ.</verse>
				<verse number="8">ಎಂತಲೇ ಪವಿತ್ರಗ್ರಂಥದಲ್ಲಿ ಹೀಗಿದೆ: “ಆತನು ಉನ್ನತಿಗೇರಿದನು ಶತ್ರುಗಳನು ಸೆರೆಯಾಳಾಗಿ ಕೊಂಡೊಯ್ದನು ನರಮಾನವರಿಗಿತ್ತನು ವರದಾನಗಳನು.”</verse>
				<verse number="9">‘ಏರಿದನು’ ಎನ್ನುವುದರ ಅರ್ಥವಾದರೂ ಏನು? ಆತನು ಮೊದಲು ಭೂಗರ್ಭಕ್ಕೂ ಇಳಿದಿದ್ದನು ಎಂಬ ಅರ್ಥವನ್ನೂ ಒಳಗೊಂಡಿದೆ.</verse>
				<verse number="10">ಇಳಿದು ಬಂದಿದ್ದಾತನೇ ಲೋಕಗಳಿಗೆಲ್ಲ ಮೇಲೇರಿಹೋಗಿದ್ದಾನೆ. ತನ್ನ ಪ್ರಸನ್ನತೆಯಿಂದ ಇಡೀ ಜಗತ್ತನ್ನೇ ಆವರಿಸಿದ್ದಾನೆ.</verse>
				<verse number="11">ಈ ವ್ಯಕ್ತಿ ನರಮಾನವರಿಗೆ ವರದಾನಗಳನ್ನಿತ್ತರು. ಕೆಲವರನ್ನು ಪ್ರೇಷಿತರನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಮತ್ತು ಬೋಧಕರನ್ನಾಗಿಯೂ ನೇಮಿಸಿದರು.</verse>
				<verse number="12">ದೇವಜನರನ್ನು ಪರಿಣಿತರನ್ನಾಗಿಸಿ ದೇವರ ಸೇವೆಗೆ ಸಿದ್ಧಗೊಳಿಸಲೆಂದು ಮತ್ತು ಯೇಸುಕ್ರಿಸ್ತರ ದೇಹವಾದ ಧರ್ಮಸಭೆ ಅಭಿವೃದ್ಧಿಹೊಂದಲೆಂದು ಈ ವರಗಳನ್ನು ಅವರಿಗೆ ನೀಡಿದರು.</verse>
				<verse number="13">ಹೀಗೆ ನಾವೆಲ್ಲರೂ ಒಂದೇ ವಿಶ್ವಾಸದಿಂದಲೂ ದೇವರ ಪುತ್ರನನ್ನು ಕುರಿತ ಜ್ಞಾನದಿಂದಲೂ ಐಕಮತ್ಯವನ್ನು ಮತ್ತು ಪರಿಪಕ್ವತೆಯನ್ನು ಪಡೆಯುತ್ತೇವೆ. ಜ್ಞಾನಾರ್ಜನೆಯನ್ನು ಪಡೆದವರಾಗಿ, ಕ್ರಿಸ್ತಯೇಸುವಿನ ಪರಿಪೂರ್ಣತೆಯ ಮಟ್ಟವನ್ನು ಮುಟ್ಟುತ್ತೇವೆ.</verse>
				<verse number="14">ಇನ್ನು ಮೇಲೆ ನಾವು ಸಣ್ಣ ಮಕ್ಕಳಂತೆ ದುರ್ಜನರ ವಂಚನೆಗೂ ದುರ್ಬೋಧಕರ ಕುಯುಕ್ತಿಗೂ ಒಳಪಟ್ಟು ಅತ್ತಿತ್ತ ಅಲೆದಾಡುವುದಿಲ್ಲ. ಗಾಳಿ ಬಂದಂತೆ ತೂರಾಡುವುದಿಲ್ಲ.</verse>
				<verse number="15">ಬದಲಾಗಿ, ಪ್ರೀತಿಯಿಂದ ಸತ್ಯವನ್ನೇ ನುಡಿಯುತ್ತೇವೆ. ಶಿರಸ್ಸಾದ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಸರ್ವತೋಮುಖವಾಗಿ ಬೆಳೆಯುತ್ತೇವೆ.</verse>
				<verse number="16">ಇಡೀ ದೇಹವು ಕ್ರಿಸ್ತಯೇಸುವನ್ನೇ ಆಧರಿಸಿದೆ. ಅವರಲ್ಲಿಯೇ ಎಲ್ಲ ನರನಾಡಿಗಳು, ಕೀಲುಗಂಟು಼ಗಳು ಒಂದಾಗಿ ಕೆಲಸಮಾಡುತ್ತವೆ. ಪ್ರತಿಯೊಂದು ಅಂಗವೂ ತನ್ನ ಕೆಲಸವನ್ನು ಸೂಕ್ತರೀತಿಯಲ್ಲಿ ನಿರ್ವಹಿಸುವುದರಿಂದ ಇಡೀ ದೇಹ ಬೆಳೆಯುತ್ತಾ, ಪ್ರೀತಿಯಲ್ಲಿ ಪ್ರವರ್ಧಿಸುತ್ತಾ ಕ್ಷೇಮಾಭಿವೃದ್ಧಿಯನ್ನು ಪಡೆಯುತ್ತದೆ.</verse>
				<verse number="17">ಪ್ರಭುವಿನ ಹೆಸರಿನಲ್ಲಿ ನಾನು ನಿಮಗೆ ಒತ್ತಿ ಹೇಳುತ್ತೇನೆ: ಇನ್ನು ಮುಂದೆ ನೀವು ಅನ್ಯಜನರಂತೆ ಜೀವಿಸುವುದನ್ನು ತ್ಯಜಿಸಿರಿ. ಅವರ ಆಲೋಚನೆಗಳು ಹುರುಳಿಲ್ಲದವು.</verse>
				<verse number="18">ಅವರ ಮನಸ್ಸಿಗೆ ಕತ್ತಲು ಕವಿದಿದೆ. ಅವರು ಅಜ್ಞಾನಿಗಳೂ ಕಠಿಣ ಹೃದಯಿಗಳೂ ಆಗಿರುವುದರಿಂದ ದೇವರು ಕೊಡುವ ಜೀವಕ್ಕೆ ಹೊರತಾಗಿದ್ದಾರೆ.</verse>
				<verse number="19">ಲಜ್ಜೆಗೆಟ್ಟವರಾಗಿ ದುರಿಚ್ಛೆಗಳಿಗೆ ಮಾರುಹೋಗಿದ್ದಾರೆ; ಅಶುದ್ಧ ಕಾರ್ಯಗಳಲ್ಲೇ ನಿರತರಾಗಿದ್ದಾರೆ.</verse>
				<verse number="20">ಕ್ರಿಸ್ತಯೇಸುವಿನಿಂದ ನೀವು ಇಂಥದ್ದೇನನ್ನು ಕಲಿಯಲಿಲ್ಲ.</verse>
				<verse number="21">ಅವರ ವಿಷಯವಾಗಿ ನೀವು ಕೇಳಿದ್ದು ಮತ್ತು ಕಲಿತದ್ದು ಅವರಲ್ಲಿರುವ ಸತ್ಯಕ್ಕೆ ಅನುಸಾರವಾಗಿತ್ತಲ್ಲವೇ?</verse>
				<verse number="22">ಆದ್ದರಿಂದ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೆ ಹಳೆಯ ಸ್ವಭಾವವನ್ನು ಕಿತ್ತೊಗೆಯಿರಿ; ಅದು ಕಾಮಾಭಿಲಾಷೆಯಿಂದ ಕಲುಷಿತವಾಗಿದೆ.</verse>
				<verse number="23">ನಿಮ್ಮ ಹೃನ್ಮನಗಳು ನವೀಕೃತವಾಗಲಿ.</verse>
				<verse number="24">ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಇದು ದೇವರ ಅನುರೂಪದಲ್ಲಿ ನಿರ್ಮಿತವಾದ ಸ್ವಭಾವ; ದೇವರೊಂದಿಗೆ ಸತ್ಸಂಬಂಧವುಳ್ಳ ಹಾಗೂ ನೈಜವಾದ ಪಾವನ ಸ್ವಭಾವ.</verse>
				<verse number="25">ಆದುದರಿಂದ, ಸುಳ್ಳಾಡುವುದನ್ನು ಬಿಟ್ಟುಬಿಡಿ. ಒಬ್ಬರೊಡನೊಬ್ಬರು ಸತ್ಯವನ್ನೇ ನುಡಿಯಿರಿ. ಏಕೆಂದರೆ, ನಾವೆಲ್ಲರೂ ಒಂದೇ ಶರೀರದ ಅಂಗಗಳು.</verse>
				<verse number="26">ಕೋಪಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ; ಸೂರ್ಯನು ಮುಳುಗುವ ಮುನ್ನ ನಿಮ್ಮ ಕೋಪವು ಇಳಿಯಲಿ.</verse>
				<verse number="27">ಸೈತಾನನಿಗೆ ಅವಕಾಶ ಕೊಡಬೇಡಿ.</verse>
				<verse number="28">ಕಳ್ಳತನ ಮಾಡುವವನು ಕಳ್ಳತನವನ್ನು ಬಿಟ್ಟುಬಿಡಲಿ; ಶ್ರಮಪಟ್ಟು ದುಡಿದು ಸಂಪಾದಿಸಲಿ. ಆಗ ತನ್ನ ಪ್ರಾಮಾಣಿಕ ದುಡಿಮೆಯಿಂದ ಕಷ್ಟದಲ್ಲಿರುವವರಿಗೆ ನೆರವು ನೀಡಲು ಸಾಧ್ಯವಾಗುವುದು.</verse>
				<verse number="29">ನಿಮ್ಮ ಬಾಯಿಂದ ಕೆಟ್ಟಮಾತುಗಳು ಬಾರದಿರಲಿ. ಪ್ರತಿಯಾಗಿ ನಿಮ್ಮ ಮಾತುಗಳು ಆದರ್ಶಕರವಾಗಿರಲಿ; ಸಮಯೋಚಿತವಾಗಿರಲಿ, ಕೇಳುವವರ ಕಿವಿಗದು ಹಿತಕರವಾಗಿರಲಿ.</verse>
				<verse number="30">ದೇವರ ಪವಿತ್ರಾತ್ಮರನ್ನು ನೋಯಿಸದಿರಿ; ವಿಮೋಚನೆಯ ದಿನದಂದು ನೀವು ದೇವರಿಗೆ ಸೇರಿದವರು ಎಂಬುದನ್ನು ತೋರಿಸಲು ನಿಮ್ಮ ಮೇಲೆ ಒತ್ತಲಾಗಿರುವ ಮುದ್ರೆಯು ಅವರೇ.</verse>
				<verse number="31">ಎಲ್ಲ ವಿಧವಾದ ದ್ವೇಷ-ದೂಷಣೆ, ಕೋಪ-ಕ್ರೋಧ ಮತ್ತು ಕೆಡುಕುತನವನ್ನು ನಿಮ್ಮಿಂದ ದೂರಮಾಡಿರಿ.</verse>
				<verse number="32">ಪರಸ್ಪರ ಕರುಣೆಯಿಂದಲೂ ಕನಿಕರದಿಂದಲೂ ವರ್ತಿಸಿರಿ. ಯೇಸುಕ್ರಿಸ್ತರಲ್ಲಿ ದೇವರು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಸಹ ಒಬ್ಬರನ್ನೊಬ್ಬರು ಕ್ಷಮಿಸಿರಿ.</verse>
			</chapter>
			<chapter number="5">
				<verse number="1">ದೇವರ ಅಕ್ಕರೆಯ ಮಕ್ಕಳು ನೀವು. ಆದ್ದರಿಂದ ದೇವರನ್ನೇ ಅನುಸರಿಸಿ ಬಾಳಿರಿ.</verse>
				<verse number="2">ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.</verse>
				<verse number="3">ನೀವು ದೇವಜನರಾಗಿರುವುದರಿಂದ ನಿಮ್ಮಲ್ಲಿ ಲೈಂಗಿಕ ಪಾಪವಾಗಲಿ, ಅಶುದ್ಧ ಕೃತ್ಯಗಳಾಗಲಿ ಮತ್ತು ದುರಾಶೆಯಾಗಲಿ ಇರಬಾರದು. ಇಂಥ ಸುದ್ದಿಗೂ ನೀವು ಅವಕಾಶ ಕೊಡಬಾರದು.</verse>
				<verse number="4">ಹೊಲಸು ಮಾತುಗಳು, ಬರಡು ನುಡಿಗಳು, ಕುಚೋದ್ಯ ಪದಗಳು ಯಾವುವೂ ನಿಮಗೆ ತರವಲ್ಲ. ಪ್ರತಿಯಾಗಿ, ದೇವರಿಗೆ ನೀವು ಕೃತಜ್ಞತಾಸ್ತುತಿಮಾಡಿರಿ.</verse>
				<verse number="5">ವ್ಯಭಿಚಾರಿಗಳಿಗೂ ಅಶ್ಲೀಲ ಕೃತ್ಯಗಳಲ್ಲಿ ಭಾಗವಹಿಸುವವರಿಗೂ ಮತ್ತು ದುರಾಶೆಯುಳ್ಳವರಿಗೂ (ದುರಾಶೆ ವಿಗ್ರಹಾರಾಧನೆಯ ಒಂದು ರೂಪ) ಕ್ರಿಸ್ತಯೇಸುವಿನ ಮತ್ತು ದೇವರ ಸಾಮ್ರಾಜ್ಯದಲ್ಲಿ ಹಕ್ಕುಬಾಧ್ಯತೆ ಇಲ್ಲವೆಂದು ನಿಮಗೆ ಮನದಟ್ಟಾಗಿರಲಿ.</verse>
				<verse number="6">ಹುರುಳಿಲ್ಲದ ಮಾತುಗಳನ್ನು ಆಡುವವರಿಗೆ ಮರುಳಾಗದಿರಿ. ಇಂಥ ಕೃತ್ಯಗಳನ್ನು ಮಾಡುವ ದುಷ್ಕರ್ಮಿಗಳ ಮೇಲೆ ದೇವರ ಕೋಪ ಎರಗುತ್ತದೆ.</verse>
				<verse number="7">ಅಂಥವರ ಸಹವಾಸವೇ ನಿಮಗೆ ಬೇಡ.</verse>
				<verse number="8">ನೀವು ಹಿಂದೊಮ್ಮೆ ಕತ್ತಲುಮಯವಾಗಿದ್ದಿರಿ. ಈಗಲಾದರೋ ಪ್ರಭುವಿನಲ್ಲಿ ಬೆಳಕಾಗಿದ್ದೀರಿ. ಆದ್ದರಿಂದ ಬೆಳಕಿನ ಮಕ್ಕಳಾಗಿ ಬಾಳಿರಿ.</verse>
				<verse number="9">ಕಾರಣ -ಸಚ್ಚರಿತೆ, ಸದಾಚಾರ ಮತ್ತು ಸತ್ಯಸಂಧತೆ ಇವೆಲ್ಲವೂ ಬೆಳಕಿನ ಕುಡಿಗಳು.</verse>
				<verse number="10">ಪ್ರಭುವಿಗೆ ಮೆಚ್ಚಿಕೆಯಾದುದು ಯಾವುದೆಂಬುದನ್ನು ಕಲಿತುಕೊಳ್ಳಿರಿ.</verse>
				<verse number="11">ನಿಷ್ಪ್ರಯೋಜಕವಾದ ಕತ್ತಲುಮಯ ಕಾರ್ಯಗಳಿಗೆ ಕೈಹಾಕದಿರಿ. ಅಂಥವುಗಳನ್ನು ಬಯಲಿಗೆಳೆದು ಖಂಡಿಸಿರಿ.</verse>
				<verse number="12">ಆ ಜನರು ಗುಟ್ಟಾಗಿ ಮಾಡುವ ಕೃತ್ಯಗಳು ಹೇಳುವುದಕ್ಕೂ ಅವಮಾನಕರವಾದುವು.</verse>
				<verse number="13">ಬೆಳಕು ಬೆಳಗಿಸುವ ವಸ್ತುಗಳೆಲ್ಲವೂ ಕಂಗೊಳಿಸುವುವು. ಹೀಗೆ ಕಂಗೊಳಿಸುವುದೆಲ್ಲವೂ ಬೆಳಕಾಗುವುದು.</verse>
				<verse number="14">ಆದ್ದರಿಂದ: ನಿದ್ದೆಮಾಡುವವನೇ ಎದ್ದೇಳು ಸತ್ತವರನು ಬಿಟ್ಟು ಬಾ ಎಚ್ಚೆತ್ತು ನನಗೀವನು ಬೆಳಕನು ಕ್ರಿಸ್ತನು.” ಎಂದು ಬರೆಯಲಾಗಿದೆ.</verse>
				<verse number="15">ಆದುದರಿಂದ ನಿಮ್ಮ ನಡತೆಯ ವಿಷಯದಲ್ಲಿ ನೀವು ಅತ್ಯಂತ ಜಾಗರೂಕರಾಗಿರಿ; ಮೂಢರಂತಿರದೆ ಜಾಣರಾಗಿ ಜೀವಿಸಿರಿ.</verse>
				<verse number="16">ಈ ದಿನಗಳು ಕೆಟ್ಟ ದಿನಗಳಾಗಿರುವುದರಿಂದ ನಿಮಗಿರುವ ಸದವಕಾಶಗಳನ್ನು ಸದ್ವಿನಿಯೋಗಿಸಿಕೊಳ್ಳಿರಿ.</verse>
				<verse number="17">ಬುದ್ಧಿಹೀನರಾಗಿರದೆ ಪ್ರಭುವಿನ ಚಿತ್ತವೇನೆಂದು ಗ್ರಹಿಸಿಕೊಳ್ಳಿರಿ.</verse>
				<verse number="18">ಮದ್ಯಪಾನಮಾಡಿ ಮತ್ತರಾಗಬೇಡಿ. ಅದು ಪಾಪಕೃತ್ಯಗಳಿಗೆ ಎಡೆಮಾಡುತ್ತದೆ. ಬದಲಿಗೆ ಪವಿತ್ರಾತ್ಮಭರಿತರಾಗಿರಿ.</verse>
				<verse number="19">ಕೀರ್ತನೆ, ಹಾಡು, ಭಕ್ತಿಗೀತೆ ಇವುಗಳಿಂದ ನಿಮ್ಮ ಭಾವಗಳನ್ನು ಪರಸ್ಪರ ವ್ಯಕ್ತಪಡಿಸಿರಿ. ಹೃದಯಾಂತರಾಳದಿಂದ ಹಾಡಿ ಪ್ರಭುವಿಗೆ ಸ್ತುತಿಸಲ್ಲಿಸಿರಿ.</verse>
				<verse number="20">ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ಯಾವಾಗಲೂ ಎಲ್ಲ ವರಗಳಿಗಾಗಿಯೂ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.</verse>
				<verse number="21">ಕ್ರಿಸ್ತಯೇಸುವಿನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಿರಿ.</verse>
				<verse number="22">ಮಹಿಳೆಯರೇ, ನೀವು ಪ್ರಭುವಿಗೆ ಹೇಗೋ ಹಾಗೆ ನಿಮ್ಮ ನಿಮ್ಮ ಪತಿಯರಿಗೆ ವಿಧೇಯರಾಗಿರಿ.</verse>
				<verse number="23">ಕ್ರಿಸ್ತಯೇಸು ಧರ್ಮಸಭೆಯೆಂಬ ದೇಹಕ್ಕೆ ಶಿರಸ್ಸಾಗಿರುವ ಹಾಗೆಯೇ, ಪತಿಯಾದವನು ತನ್ನ ಪತ್ನಿಗೆ ಶಿರಸ್ಸಾಗಿರುತ್ತಾನೆ. ಕ್ರಿಸ್ತಯೇಸುವೇ ಧರ್ಮಸಭೆಯ ಉದ್ಧಾರಕ.</verse>
				<verse number="24">ಧರ್ಮಸಭೆ ಕ್ರಿಸ್ತಯೇಸುವಿನ ಆಡಳಿತಕ್ಕೆ ಒಳಪಟ್ಟಿರುವಂತೆ ಪತ್ನಿಯೂ ಸಹ ಎಲ್ಲಾ ವಿಷಯಗಳಲ್ಲೂ ತನ್ನ ಪತಿಯ ಆಡಳಿತಕ್ಕೆ ಒಳಪಟ್ಟಿರಬೇಕು.</verse>
				<verse number="25">ಪುರುಷರೇ, ಕ್ರಿಸ್ತಯೇಸು ಧರ್ಮಸಭೆಯನ್ನು ಪ್ರೀತಿಸಿದ ಪ್ರಕಾರ ನಿಮ್ಮ ನಿಮ್ಮ ಪತ್ನಿಯರನ್ನು ಪ್ರೀತಿಸಿರಿ. ಧರ್ಮಸಭೆಯನ್ನು ಪಾವನಗೊಳಿಸುವುದಕ್ಕಾಗಿ ಕ್ರಿಸ್ತಯೇಸು ತಮ್ಮ ಪ್ರಾಣವನ್ನೇ ಕೊಟ್ಟರು. ವಾಕ್ಯೋಪದೇಶದಿಂದಲೂ ಜಲಸ್ನಾನದಿಂದಲೂ ಅದನ್ನು ಶುದ್ಧೀಕರಿಸಿದರು.</verse>
				<verse number="26"></verse>
				<verse number="27">ಧರ್ಮಸಭೆ ಕಳಂಕಕಲ್ಮಷವಾಗಲಿ, ಸುಕ್ಕುಬೊಕ್ಕೆಯಾಗಲಿ ಇಲ್ಲದ ಸೌಂದರ್ಯವತಿಯಾಗಿ ತಮಗೆ ಅರ್ಪಿಸಿಕೊಳ್ಳುವಂತೆ ಹೀಗೆ ಮಾಡಿದರು.</verse>
				<verse number="28">ಹಾಗೆಯೇ ಪುರುಷನು ಸಹ ತನ್ನ ಶರೀರವನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನು ಪ್ರೀತಿಸಲಿ. ತನ್ನ ಪತ್ನಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸುತ್ತಾನೆ.</verse>
				<verse number="29">ಸ್ವಂತ ಶರೀರವನ್ನು ಯಾರೂ ಎಂದೂ ದ್ವೇಷಿಸುವುದಿಲ್ಲ, ಬದಲಿಗೆ ಅದನ್ನು ಪೋಷಿಸಿ ಪಾಲನೆ ಮಾಡುತ್ತಾನೆ. ಧರ್ಮಸಭೆಯನ್ನು ಸಹ ಕ್ರಿಸ್ತಯೇಸು ಹೀಗೆಯೇ ಕಾಪಾಡುತ್ತಾರೆ.</verse>
				<verse number="30">ನಾವು ಆ ಸಭೆಯ ಅಂಗಗಳು.</verse>
				<verse number="31">ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: “ಈ ಕಾರಣದಿಂದ ಪುರುಷನಾದವನು ತನ್ನ ತಂದೆತಾಯನ್ನು ಬಿಟ್ಟು ತನ್ನ ಪತ್ನಿಯೊಡನೆ ಒಂದು ಕೂಡುವನು ಮತ್ತು ಅವರಿಬ್ಬರೂ ಒಂದೇ ಶರೀರವಾಗಿರುವರು.”</verse>
				<verse number="32">ಈ ಗಹನವಾದ ರಹಸ್ಯವು ಯೇಸುಕ್ರಿಸ್ತರಿಗೂ ಧರ್ಮಸಭೆಗೂ ಇರುವ ಸಂಬಂಧವನ್ನು ಸೂಚಿಸುತ್ತದೆ ಎಂಬುದೇ ನನ್ನ ಅಭಿಪ್ರಾಯ.</verse>
				<verse number="33">ಆದರೆ ಇದು ನಿಮಗೂ ಅನ್ವಯಿಸುತ್ತದೆ. ಪ್ರತಿಯೊಬ್ಬ ಪುರುಷನು ತನ್ನನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನೂ ಪ್ರೀತಿಸಲಿ ಮತ್ತು ಪ್ರತಿಯೊಬ್ಬ ಸ್ತ್ರೀಯು ತನ್ನ ಪತಿಯ ವಿಷಯದಲ್ಲಿ ಗೌರವದಿಂದ ನಡೆದುಕೊಳ್ಳಲಿ.</verse>
			</chapter>
			<chapter number="6">
				<verse number="1">ಮಕ್ಕಳೇ, ಪ್ರಭುವಿನಲ್ಲಿ ನಿಮ್ಮ ತಂದೆತಾಯಿಗಳ ಮಾತಿಗೆ ಕಿವಿಗೊಡಿ. ಇದು ಧರ್ಮಸಮ್ಮತವಾದುದು.</verse>
				<verse number="2">‘ನಿನ್ನ ತಂದೆತಾಯನ್ನು ಗೌರವಿಸು’ ಎಂಬುದು ವಾಗ್ದಾನದಿಂದ ಕೂಡಿದ ಮೊದಲನೆಯ ಆಜ್ಞೆ.</verse>
				<verse number="3">ಇದನ್ನು ಪಾಲಿಸಿದರೆ ನಿನಗೆ ಶುಭವಾಗುವುದು; ನೀನು ಬಹುಕಾಲ ಬಾಳುವೆ.</verse>
				<verse number="4">ತಂದೆತಾಯಿಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಕೆರಳಿಸಬೇಡಿ. ಪ್ರತಿಯಾಗಿ ಪ್ರಭುವಿಗೆ ಮೆಚ್ಚುಗೆಯಾಗುವ ರೀತಿಯಲ್ಲಿ ಅವರಿಗೆ ಶಿಕ್ಷಣವನ್ನು ಕೊಟ್ಟು ಶಿಸ್ತಿನಿಂದ ಸಾಕಿಸಲಹಿರಿ.</verse>
				<verse number="5">ಸೇವಕರೇ, ನೀವು ಮಾಡುತ್ತಿರುವುದು ಕ್ರಿಸ್ತಯೇಸುವಿನ ಸೇವೆಯನ್ನೇ ಎಂದು ಭಾವಿಸಿ, ನಿಮ್ಮ ಲೌಕಿಕ ಧಣಿಗಳಿಗೆ ಭಯಭಕ್ತಿಯಿಂದಲೂ ಏಕಮನಸ್ಸಿನಿಂದಲೂ ವಿಧೇಯರಾಗಿರಿ.</verse>
				<verse number="6">ಧಣಿಗಳನ್ನು ಮೆಚ್ಚಿಸುವ ಸಲುವಾಗಿ ಮುಖದಾಕ್ಷಿಣ್ಯದ ಸೇವೆಯನ್ನು ಮಾಡದಿರಿ. ಕ್ರಿಸ್ತಯೇಸುವಿನ ದಾಸರಂತೆ ದೈವೇಚ್ಛೆಯನ್ನು ಹೃದಯಪೂರ್ವಕವಾಗಿ ಈಡೇರಿಸಿರಿ.</verse>
				<verse number="7">ನೀವು ಮಾಡುವುದು ಜನಸೇವೆಯಲ್ಲ, ಪ್ರಭುಸೇವೆ ಎಂದೇ ಭಾವಿಸಿ ನಗುಮುಖದಿಂದ ಸೇವೆಮಾಡಿ.</verse>
				<verse number="8">ದಾಸ್ಯದಲ್ಲಿರುವವನಾಗಲಿ, ಸ್ವತಂತ್ರವುಳ್ಳವನಾಗಿರಲಿ ಸತ್ಕಾರ್ಯವನ್ನು ಮಾಡುವವನು ಪ್ರಭುವಿನಿಂದ ತಕ್ಕ ಪ್ರತಿಫಲವನ್ನು ಪಡೆದೇ ತೀರುವನೆಂದು ನೀವು ಬಲ್ಲಿರಿ.</verse>
				<verse number="9">ಯಜಮಾನರೇ, ನೀವು ಕೂಡ ನಿಮ್ಮ ಸೇವಕರೊಡನೆ ಯೋಗ್ಯವಾದ ರೀತಿಯಲ್ಲಿ ವರ್ತಿಸಿರಿ. ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿ. ಸ್ವರ್ಗಲೋಕದಲ್ಲಿ ನಿಮಗೂ ಅವರಿಗೂ ಒಬ್ಬ ಯಜಮಾನ ಇರುತ್ತಾನೆ. ಆತ ಪಕ್ಷಪಾತಿಯಲ್ಲ ಎಂಬುದನ್ನು ಮರೆಯದಿರಿ.</verse>
				<verse number="10">ಕೊನೆಯದಾಗಿ, ಪ್ರಭುವಿನ ಅನ್ಯೋನ್ಯತೆಯಲ್ಲಿ ಬಲಾಢ್ಯರಾಗಿರಿ. ಅವರ ಪರಾಕ್ರಮ ಶಕ್ತಿಯನ್ನು ಆಶ್ರಯಿಸಿರಿ.</verse>
				<verse number="11">ಸೈತಾನನು ನಿಮಗೆ ಒಡ್ಡುವ ಕುತಂತ್ರಗಳ ವಿರುದ್ಧ ಅಚಲರಾಗಿ ನಿಲ್ಲಲು ನೀವು ಸಮರ್ಥರಾಗುವಂತೆ ದೇವರು ನೀಡುವ ಸಕಲ ಶಸ್ತ್ರಾಸ್ತ್ರಗಳನ್ನು ಧರಿಸಿಕೊಳ್ಳಿರಿ.</verse>
				<verse number="12">ನಮ್ಮ ಹೋರಾಟ ಕೇವಲ ನರಮಾನವರೊಂದಿಗಲ್ಲ, ದಿಗಂತದಲ್ಲಿರುವ ಅಧಿಕಾರಿಗಳ ಹಾಗೂ ಆಧಿಪತ್ಯಗಳ ವಿರುದ್ಧ; ಪ್ರಸ್ತುತ ಅಂಧಕಾರಲೋಕಾಧಿಪತಿಗಳ ಹಾಗೂ ಅಶರೀರ ದುಷ್ಟಗಣಗಳ ವಿರುದ್ಧ.</verse>
				<verse number="13">ಎಂದೇ, ದೇವರು ಕೊಡುವ ಸಕಲ ಶಸ್ತ್ರಾಸ್ತ್ರಗಳೊಂದಿಗೆ ಸುಸಜ್ಜಿತರಾಗಿರಿ. ಆ ದುರ್ದಿನದಂದು ವೈರಿಗಳನ್ನು ಎದುರಿಸಲು ಆಗ ನೀವು ಶಕ್ತರಾಗುತ್ತೀರಿ. ಮಾತ್ರವಲ್ಲ, ಕಟ್ಟಕಡೆಯವರೆಗೆ ಹಿಮ್ಮೆಟ್ಟದೆ ನಿಲ್ಲುತ್ತೀರಿ;</verse>
				<verse number="14">ಹಿಮ್ಮೆಟ್ಟದೆ ನಿಲ್ಲಲೇಬೇಕು. ಇದಕ್ಕಾಗಿ ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಳ್ಳಿ. ನೀತಿಯೆಂಬ ರಕ್ಷಕವಚವನ್ನು ತೊಟ್ಟುಕೊಳ್ಳಿರಿ.</verse>
				<verse number="15">ಶಾಂತಿಯ ಶುಭಸಂದೇಶವನ್ನು ಸಾರಲು ಶ್ರದ್ಧೆಯೆಂಬ ಪಾದರಕ್ಷೆಯನ್ನು ಮೆಟ್ಟುಕೊಳ್ಳಿರಿ.</verse>
				<verse number="16">ಸತತವೂ ವಿಶ್ವಾಸವೆಂಬ ಗುರಾಣಿಯನ್ನು ಹಿಡಿದುಕೊಳ್ಳಿರಿ. ಹೀಗೆ ಸೈತಾನನ ಅಗ್ನಿಬಾಣಗಳನ್ನೆಲ್ಲಾ ನಂದಿಸಲು ಶಕ್ತರಾಗುವಿರಿ.</verse>
				<verse number="17">ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಳ್ಳಿ; ಪವಿತ್ರಾತ್ಮರ ಕೊಡುಗೆಯಾದ ದೇವರ ವಾಕ್ಯವು ನಿಮಗೆ ಖಡ್ಗವಾಗಿರಲಿ.</verse>
				<verse number="18">ಪವಿತ್ರಾತ್ಮರಿಂದ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲೂ ಪ್ರಾರ್ಥಿಸಿರಿ. ನಿಮ್ಮ ಕೋರಿಕೆ, ಬೇಡಿಕೆಗಳನ್ನು ದೇವರಿಗೆ ಅರ್ಪಿಸಿರಿ. ಎಚ್ಚರವಾಗಿದ್ದು ಎಲ್ಲಾ ದೇವಜನರಿಗಾಗಿ ಎಡೆಬಿಡದೆ ಪ್ರಾರ್ಥಿಸಿರಿ.</verse>
				<verse number="19">ಶುಭಸಂದೇಶದ ಸತ್ಯಾರ್ಥವನ್ನು ನಿರ್ಭೀತನಾಗಿ ಸಾರಲು ಸೂಕ್ಷ್ಮವಾದ ಮಾತುಗಳನ್ನು ದೇವರು ನನಗೆ ದಯಪಾಲಿಸಲೆಂದು ನನಗೋಸ್ಕರ ಪ್ರಾರ್ಥಿಸಿರಿ.</verse>
				<verse number="20">ಶುಭಸಂದೇಶದ ನಿಮಿತ್ತ ನಾನು ಸೆರೆಯಾಳಾಗಿದ್ದರೂ ಪ್ರಭುವಿನ ರಾಯಭಾರಿಯಾಗಿದ್ದೇನೆ. ಎಂತಲೇ, ಈ ಶುಭಸಂದೇಶವನ್ನು ಧೈರ್ಯದಿಂದ ಸೂಕ್ತ ರೀತಿಯಲ್ಲಿ ಸಾರಲಾಗುವಂತೆ ನನಗಾಗಿ ಪ್ರಾರ್ಥಿಸಿರಿ.</verse>
				<verse number="21">ಪ್ರಿಯ ಸಹೋದರ ತುಖಿಕನು ನನ್ನ ವಿಷಯವಾಗಿಯೂ ನನ್ನ ಕೆಲಸಕಾರ್ಯಗಳ ವಿಷಯವಾಗಿಯೂ ನಿಮಗೆ ತಿಳಿಸುವನು. ಆತ ಪ್ರಭುವಿನ ಪ್ರಾಮಾಣಿಕ ಸೇವಕ.</verse>
				<verse number="22">ನಮ್ಮ ಸಮಾಚಾರವನ್ನು ನಿಮಗೆ ತಿಳಿಸಲೆಂದು ಹಾಗೂ ನಿಮ್ಮನ್ನು ಉತ್ತೇಜಿಸಲೆಂದು ಆತನನ್ನು ನಿಮ್ಮಲ್ಲಿಗೆ ಕಳುಹಿಸಿದ್ದೇನೆ.</verse>
				<verse number="23">ಪಿತನಾದ ದೇವರೂ ಪ್ರಭುವಾದ ಯೇಸುಕ್ರಿಸ್ತರೂ ಸಹೋದರರಿಗೆ ಶಾಂತಿಸಮಾಧಾನವನ್ನು ಮತ್ತು ಪ್ರೀತಿವಿಶ್ವಾಸವನ್ನು ದಯಪಾಲಿಸಲಿ.</verse>
				<verse number="24">ಪ್ರಭು ಯೇಸುಕ್ರಿಸ್ತರಲ್ಲಿ ಚಿರಪ್ರೀತಿಯನ್ನಿಟ್ಟ ಎಲ್ಲರಿಗೂ ದೇವರ ಅನುಗ್ರಹ ಲಭಿಸಲಿ!</verse>
			</chapter>
		</book>
		<book number="50">
			<chapter number="1">
				<verse number="1">ಕ್ರಿಸ್ತಯೇಸುವಿನಲ್ಲಿ ಜೀವಿಸುವ ಫಿಲಿಪ್ಪಿಯ ದೇವಜನರಿಗೆ, ಧರ್ಮಾಧಿಕಾರಿಗಳಿಗೆ ಹಾಗೂ ಧರ್ಮಸೇವಕರಿಗೆ - ಕ್ರಿಸ್ತಯೇಸುವಿನ ದಾಸರಾದ ಪೌಲ ಮತ್ತು ತಿಮೊಥೇಯರು ಜೊತೆಗೂಡಿ ಬರೆಯುವ ಪತ್ರ.</verse>
				<verse number="2">ನಮ್ಮೆಲ್ಲರ ಪಿತನಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಆಶೀರ್ವಾದವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!</verse>
				<verse number="3">ನಿಮ್ಮನ್ನು ಜ್ಞಾಪಿಸಿಕೊಳ್ಳುವಾಗಲೆಲ್ಲ ನಾನು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.</verse>
				<verse number="4">ನಿಮಗೋಸ್ಕರ ಯಾವಾಗಲೂ ತುಂಬುಹೃದಯದಿಂದ ಪ್ರಾರ್ಥಿಸುತ್ತೇನೆ.</verse>
				<verse number="5">ಏಕೆಂದರೆ, ನಾನು ನಿಮ್ಮನ್ನು ಸಂಧಿಸಿದ ಮೊದಲ ದಿನದಿಂದ ಇಂದಿನವರೆಗೂ ನೀವು ನನ್ನೊಡನೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸುತ್ತಿರುವಿರಿ.</verse>
				<verse number="6">ಈ ಸತ್ಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ದೇವರು ಅದನ್ನು ಮುಂದುವರೆಸುತ್ತಾ, ಯೇಸುಕ್ರಿಸ್ತರು ಪುನರಾಗಮಿಸುವಷ್ಟರಲ್ಲಿ ಪೂರೈಸುವರು ಎಂಬುದೇ ನನ್ನ ದೃಢ ನಂಬಿಕೆ.</verse>
				<verse number="7">ನೀವು ನನಗೆ ಆತ್ಮೀಯರು. ಆದಕಾರಣ, ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಸೆರೆಯಲ್ಲಿರುವಾಗಲೂ ಶುಭಸಂದೇಶಕ್ಕಾಗಿ ಹೋರಾಡಿ ಆದನ್ನು ಸ್ಥಿರಗೊಳಿಸುವಾಗಲೂ ದೇವರ ಅನುಗ್ರಹದಲ್ಲಿ ನೀವು ನನ್ನೊಂದಿಗೆ ಸಹಭಾಗಿಗಳಾಗಿದ್ದಿರಿ.</verse>
				<verse number="8">ಕ್ರಿಸ್ತಯೇಸುವಿನಲ್ಲಿರುವ ಉತ್ಕಟ ಪ್ರೀತಿಯಿಂದಲೇ ನಾನು ನಿಮ್ಮೆಲ್ಲರಿಗಾಗಿ ಹಂಬಲಿಸುತ್ತಿದ್ದೇನೆ; ಇದಕ್ಕೆ ದೇವರೇ ಸಾಕ್ಷಿ.</verse>
				<verse number="9">ನೀವು ಪ್ರೀತಿಯಲ್ಲಿ ಪ್ರವರ್ಧಿಸುತ್ತಾ, ಪೂರ್ಣ ಜ್ಞಾನ ಹಾಗೂ ವಿವೇಕದಿಂದ ಕೂಡಿದವರಾಗಬೇಕೆಂಬುದೇ ನನ್ನ ಪ್ರಾರ್ಥನೆ.</verse>
				<verse number="10">ಹೀಗೆ ನೀವು ಉತ್ತಮೋತ್ತಮವಾದುವುಗಳನ್ನೇ ಆರಿಸಿಕೊಂಡು, ಪ್ರಭು ಕ್ರಿಸ್ತರ ದಿನದಂದು ನಿರ್ದೋಷಿಗಳೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಿರಿ.</verse>
				<verse number="11">ಯೇಸುಕ್ರಿಸ್ತರ ಮುಖಾಂತರ ಲಭಿಸುವ ಸತ್ಸಂಬಂಧದ ಫಲಗಳಿಂದ ತುಂಬಿದವರಾಗಿ ದೇವರಿಗೆ ಸ್ತುತಿಸಲ್ಲಿಸಿ, ಅವರ ಮಹಿಮೆ ಬೆಳಗುವಂತೆ ಮಾಡುವಿರಿ.</verse>
				<verse number="12">ಸಹೋದರರೇ, ನನಗೆ ಬಂದೊದಗಿರುವುದೆಲ್ಲವೂ ಶುಭಸಂದೇಶದ ಬೆಳವಣಿಗೆಗೆ ಹಿತಕರವಾಗಿ ಪರಿಣಮಿಸಿದೆ. ಇದು ನಿಮಗೆ ತಿಳಿದಿರಬೇಕೆಂಬುದೇ ನನ್ನ ಆಶಯ.</verse>
				<verse number="13">ಯೇಸುಕ್ರಿಸ್ತರ ಸಲುವಾಗಿಯೇ ನಾನು ಸೆರೆಯಲ್ಲಿರುವುದೆಂದು ಇಲ್ಲಿಯ ಅರಮನೆಯ ಕಾವಲಾಳುಗಳಿಗೂ ಇತರರೆಲ್ಲರಿಗೂ ಚೆನ್ನಾಗಿ ತಿಳಿದಿದೆ.</verse>
				<verse number="14">ನನ್ನ ಬಂಧನದಿಂದಾಗಿ ನಮ್ಮ ಸಹೋದರರಲ್ಲಿ ಅನೇಕರು ದೇವರಲ್ಲಿ ಭರವಸೆಯಿಟ್ಟಿರುವರು. ಅಳುಕಿಲ್ಲದೆ, ಅಂಜಿಕೆಯಿಲ್ಲದೆ ದಿಟ್ಟತನದಿಂದ ಶುಭಸಂದೇಶವನ್ನು ಅವರು ಸಾರುತ್ತಿರುವರು.</verse>
				<verse number="15">ಕೆಲವರೇನೋ ಅಸೂಯೆಯಿಂದಲೂ ವೈಮನಸ್ಸಿನಿಂದಲೂ ಕ್ರಿಸ್ತಯೇಸುವನ್ನು ಸಾರುತ್ತಿರುವುದು ನಿಜ; ಆದರೆ ಮಿಕ್ಕವರು ಸದುದ್ದೇಶದಿಂದ ಸಾರುತ್ತಿದ್ದಾರೆ;</verse>
				<verse number="16">ಒಲವಿನ ಒತ್ತಾಯದಿಂದ ಸಾರುತ್ತಿದ್ದಾರೆ; ಶುಭಸಂದೇಶದ ಸತ್ಯವನ್ನು ಸಮರ್ಥಿಸುವುದಕ್ಕಾಗಿ ನಾನು ಬಂಧಿತನೆಂದು ಇವರು ಬಲ್ಲರು.</verse>
				<verse number="17">ಆ ಕೆಲವರಾದರೋ ಸ್ವಾರ್ಥಸಾಧನೆಗಾಗಿಯೇ ಹೊರತು ಪ್ರಾಮಾಣಿಕರಾಗಿ ಕ್ರಿಸ್ತಯೇಸುವನ್ನು ಸಾರುತ್ತಿಲ್ಲ. ಸೆರೆಯಲ್ಲಿರುವ ನನ್ನನ್ನು ಇನ್ನೂ ಹೆಚ್ಚಿನ ಕಷ್ಟಕ್ಕೆ ಗುರಿಮಾಡಬೇಕೆಂಬುದೇ ಅವರ ಉದ್ದೇಶ.</verse>
				<verse number="18">ಅವರ ಉದ್ದೇಶ ಏನೇ ಆಗಿರಲಿ, ನನಗದು ಮುಖ್ಯವಲ್ಲ. ಕ್ರಿಸ್ತಯೇಸುವನ್ನು ಅವರು ಸಾರುತ್ತಿರುವುದೇ ನನಗೆ ಸಂತೋಷ.</verse>
				<verse number="19">ಹೌದು, ನನಗದು ತುಂಬಾ ಸಂತೋಷದ ವಿಷಯ. ನಿಮ್ಮ ಪ್ರಾರ್ಥನಾ ಫಲದಿಂದಲೂ ಯೇಸುಕ್ರಿಸ್ತರು ಕೊಡುವ ಆತ್ಮದ ನೆರವಿನಿಂದಲೂ ನನಗೆ ಬಿಡುಗಡೆ ಖಚಿತವೆಂದು ಬಲ್ಲೆ.</verse>
				<verse number="20">ನನ್ನ ಕರ್ತವ್ಯಪಾಲನೆಯಲ್ಲಿ ನಾಚುವಂಥ ಸಂದರ್ಭವು ನನಗೆಂದಿಗೂ ಬರದೆಂದು ಬಲ್ಲೆ; ನಾನು ಬದುಕಿದರೂ ಸರಿ, ಸತ್ತರೂ ಸರಿ; ನನ್ನ ದೇಹದ ಮೂಲಕ ಕ್ರಿಸ್ತಯೇಸುವಿಗೆ ಎಂದಿನಂತೆ ಈಗಲೂ ಮಹಿಮೆ ಉಂಟಾಗಬೇಕೆಂಬುದೇ ನನ್ನ ಉತ್ಕಟ ಆಕಾಂಕ್ಷೆ ಹಾಗೂ ನಿರೀಕ್ಷೆ.</verse>
				<verse number="21">ನನಗಂತೂ ಬದುಕುವುದೆಂದರೆ ಕ್ರಿಸ್ತಯೇಸುವೇ; ಸಾಯುವುದು ಲಾಭವೇ.</verse>
				<verse number="22">ದೈಹಿಕವಾಗಿ ಬದುಕುವುದು ಫಲಪ್ರದವಾಗಿದ್ದರೆ, ನಾನು ಬದುಕುವುದು ಉತ್ತಮವೋ ಅಥವಾ ಸಾಯುವುದು ಸೂಕ್ತವೋ ನನಗೆ ತಿಳಿಯದು.</verse>
				<verse number="23">ಉಭಯ ಸಂಕಟಕ್ಕೆ ಸಿಲುಕಿದ್ದೇನೆ. ಒಂದು ಕಡೆ, ಈ ಬದುಕನ್ನು ತೊರೆದು ಕ್ರಿಸ್ತಯೇಸುವಿನೊಡನೆ ಒಂದಾಗಿರಬೇಕೆಂಬುದೇ ನನ್ನ ಬಯಕೆ. ಇದು ಎಷ್ಟೋ ಮೇಲಾದುದು.</verse>
				<verse number="24">ಮತ್ತೊಂದು ಕಡೆ, ನಿಮಗೋಸ್ಕರ ಇಹದಲ್ಲಿದ್ದು ಜೀವಿಸುವುದು ಅತ್ಯವಶ್ಯಕವಾಗಿದೆ.</verse>
				<verse number="25">ಇದರಲ್ಲಿ ನನಗೆ ಎಳ್ಳಷ್ಟೂ ಸಂದೇಹವಿಲ್ಲ. ಈ ಕಾರಣ, ನಾನು ಇಹದಲ್ಲಿ ಉಳಿಯುವೆನೆಂದು ಬಲ್ಲೆ. ನಿಮ್ಮೆಲ್ಲರೊಡನಿದ್ದು, ಕ್ರೈಸ್ತವಿಶ್ವಾಸದಲ್ಲಿ ನೀವು ವೃದ್ಧಿಯಾಗಿ ಆನಂದಿಸುವಂತೆ ನಿಮಗೆ ನೆರವಾಗುತ್ತೇನೆ.</verse>
				<verse number="26">ನಿಮ್ಮಲ್ಲಿಗೆ ನಾನು ಮರಳಿಬಂದಾಗ ಕ್ರಿಸ್ತಯೇಸುವಿನಲ್ಲಿ ನೀವು ಹಿರಿಹಿಗ್ಗುವುದಕ್ಕೆ ಮಹದವಕಾಶ ದೊರಕುವುದು.</verse>
				<verse number="27">ಅದೇನೇ ಇರಲಿ, ನೀವು ಮಾತ್ರ ಕ್ರಿಸ್ತಯೇಸುವಿನ ಶುಭಸಂದೇಶಕ್ಕೆ ಯೋಗ್ಯರಾಗಿ ನಡೆದುಕೊಳ್ಳಿರಿ. ನಾನು ನಿಮ್ಮಲ್ಲಿಗೆ ಬಂದರೂ ಸರಿ, ಬಾರದಿದ್ದರೂ ಸರಿ, ಇದು ಮುಖ್ಯವಲ್ಲ. ಶುಭಸಂದೇಶವು ನೀಡುವ ವಿಶ್ವಾಸಕ್ಕಾಗಿ ನೀವು ಒಮ್ಮನಸ್ಸಿನಿಂದ, ಕೆಚ್ಚಿನಿಂದ ಹೋರಾಡುವುದೇ ಮುಖ್ಯ. ಇದು ನನಗೆ ತಿಳಿದುಬಂದರೆ ಅಷ್ಟೇ ಸಾಕು.</verse>
				<verse number="28">ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲೂ ಅಂಜದೆ, ಅಳುಕದೆ ಧೈರ್ಯದಿಂದಿರಿ. ಇದೇ ಅವರಿಗೆ ಅವರ ವಿನಾಶದ ಸ್ಪಷ್ಟ ಮುನ್ಸೂಚನೆ! ನಿಮಗೆ ದೇವರಿಂದ ಬರುವ ಸಂರಕ್ಷಣೆಯ ಮುನ್ಸೂಚನೆ.</verse>
				<verse number="29">ಕ್ರಿಸ್ತಯೇಸುವನ್ನು ನೀವು ವಿಶ್ವಾಸಿಸುವುದು ಮಾತ್ರವಲ್ಲ, ಅವರಿಗೋಸ್ಕರ ಸಂಕಷ್ಟಗಳನ್ನು ಅನುಭವಿಸುವ ಸೌಭಾಗ್ಯವೂ ನಿಮ್ಮದಾಗಿದೆ.</verse>
				<verse number="30">ನಿಮ್ಮ ಹೋರಾಟವೂ ನಮ್ಮ ಹೋರಾಟವೂ ಒಂದೇ ಆಗಿದೆ. ನಾನು ಕ್ರಿಸ್ತಯೇಸುವಿಗಾಗಿ ಪಟ್ಟ ಕಷ್ಟವನ್ನು ನೀವು ಕಂಡಿದ್ದೀರಿ. ಈಗಲೂ ಅನುಭವಿಸುತ್ತಿದ್ದೇನೆಂದು ಅರಿತಿದ್ದೀರಿ.</verse>
			</chapter>
			<chapter number="2">
				<verse number="1">ಕ್ರಿಸ್ತಯೇಸುವಿನಲ್ಲಿ ನಿಮಗೆ ಉತ್ಸಾಹ, ಉತ್ತೇಜನ, ಪ್ರೀತಿ, ಪ್ರೇರಣೆ, ಪವಿತ್ರಾತ್ಮ ಅವರ ಅನ್ಯೋನ್ಯತೆ, ದೀನದಯಾಳತೆ ಇರುವುದಾದರೆ ಐಕಮತ್ಯದಿಂದ ಬಾಳಿರಿ.</verse>
				<verse number="2">ನಿಮ್ಮೆಲ್ಲರಲ್ಲಿ ಒಂದೇ ಮನಸ್ಸು, ಒಂದೇ ಪ್ರೀತಿ ಇರಲಿ. ನಿಮ್ಮ ಗುರಿ ಧ್ಯೇಯಗಳು ಒಂದೇ ಆಗಿರಲಿ. ಆಗ ನನ್ನ ಸಂತೋಷವು ಸಂಪೂರ್ಣಗೊಳ್ಳುವುದು.</verse>
				<verse number="3">ಸ್ವಾರ್ಥಸಾಧನೆಗಾಗಲಿ, ಡಂಭಾಚಾರಕ್ಕಾಗಲಿ ಏನನ್ನೂ ಮಾಡಬೇಡಿ. ಪರಸ್ಪರ ನಮ್ರತೆಯಿಂದ ನಡೆದುಕೊಳ್ಳಿ; ಇತರರು ನಿಮಗಿಂತಲೂ ಶ್ರೇಷ್ಠರೆಂದು ಪರಿಗಣಿಸಿರಿ.</verse>
				<verse number="4">ಸ್ವಹಿತವನ್ನೇ ಗಮನಿಸದೆ ಪರರ ಹಿತವನ್ನೂ ಬಯಸಿರಿ.</verse>
				<verse number="5">ಕ್ರಿಸ್ತಯೇಸುವಿನಲ್ಲಿರುವ ಮನೋಭಾವ ನಿಮ್ಮಲ್ಲೂ ನೆಲಸಿರಲಿ:</verse>
				<verse number="6">ದೇವಸ್ವರೂಪಿ ತಾನಾಗಿದ್ದರೂ ನಿರುತ ದೇವರಿಗೆ ಸಮನಾದ ಆ ಸಿರಿ ಪದವಿಯನಾತ ಹಿಡಿದಿಟ್ಟುಕೊಳ್ಳಲಿಲ್ಲ ಬಿಡಲೊಲ್ಲೆನೆನುತ.</verse>
				<verse number="7">ತನ್ನನ್ನೇ ಬರಿದುಮಾಡಿಕೊಂಡು ದಾಸನ ರೂಪವನು ಧರಿಸಿಕೊಂಡು ಮನುಜನಾಕಾರದಲಿ ಕಾಣಿಸಿಕೊಂಡು ನರಮಾನವರಿಗೆ ಸರಿಸಮನಾದ.</verse>
				<verse number="8">ತನ್ನನ್ನೇ ಆತ ತಗ್ಗಿಸಿಕೊಂಡು ವಿಧೇಯನಾಗಿ ನಡೆದುಕೊಂಡು ಮರಣಪರಿಯಂತ ಹೌದೌದು, ಶಿಲುಬೆಯ ಮರಣಪರಿಯಂತ ವಿಧೇಯನಾದ.</verse>
				<verse number="9">ಎಂತಲೇ ಪರಮೋನ್ನತ ಸ್ಥಾನಕ್ಕೇರಿಸಿದನಾತನನು ಇತ್ತನು ಹೆಸರುಗಳೊಳುತ್ತಮ ಹೆಸರನು ದೇವಪರಮನು.</verse>
				<verse number="10">ಯೇಸುವಿನ ಹೆಸರಿಗೆಂದೇ ಮೊಣಕಾಲೂರಿ ಮಣಿವರು ಸ್ವರ್ಗವಾಸಿಗಳು, ಭೂನಿವಾಸಿಗಳು, ಪಾತಾಳ ಜೀವರಾಶಿಗಳು.</verse>
				<verse number="11">	‘ಕ್ರಿಸ್ತಯೇಸುವೇ ಪ್ರಭು' ಎಂದೆಲ್ಲರಿಗೆ ಅರಿಕೆ ಮಾಡುವರು ಪಿತದೇವನ ಮಹಿಮೆಯನು ಈ ಪರಿ ಹೊಗಳಿ ಸಾರುವರವರು.</verse>
				<verse number="12">ಪ್ರಿಯ ಸಹೋದರರೇ, ನಾನು ನಿಮ್ಮಲ್ಲಿದ್ದಾಗ ನೀವು ಯಾವಾಗಲೂ ನನ್ನ ಮಾತಿನಂತೆ ನಡೆದುಕೊಂಡಿರಿ. ಈಗ, ನಾನು ದೂರವಿರುವಾಗ ಇನ್ನೂ ಹೆಚ್ಚಿನ ಆಸಕ್ತಿಯಿಂದ ನಡೆದುಕೊಳ್ಳಿ. ನಿಮ್ಮ ಜೀವೋದ್ಧಾರಕ್ಕಾಗಿ ಭಯಭಕ್ತಿಯಿಂದ ಶ್ರಮಿಸಿರಿ.</verse>
				<verse number="13">ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ.</verse>
				<verse number="14">ನೀವು ಮಾಡುವ ಎಲ್ಲಾ ಕಾರ್ಯಗಳನ್ನು ಗೊಣಗುಟ್ಟದೆ, ವಿವಾದವಿಲ್ಲದೆ, ಏಕಮನಸ್ಸಿನಿಂದ ಮಾಡಿ.</verse>
				<verse number="15">ನಿರ್ದೋಷಿಗಳೂ ನಿಷ್ಕಳಂಕರೂ ಆಗಿರಿ. ವಕ್ರಬುದ್ಧಿಯ ದುಷ್ಟಜನರ ನಡುವೆ ದೇವರ ಪರಿಶುದ್ಧ ಮಕ್ಕಳಂತೆ ಬಾಳಿರಿ. ಜೀವದಾಯಕ ಸಂದೇಶವನ್ನು ಎತ್ತಿಹಿಡಿಯಿರಿ; ಆಗ ನಕ್ಷತ್ರಗಳು ಆಕಾಶವನ್ನು ಬೆಳಗಿಸುವಂತೆ ಪ್ರಪಂಚದಲ್ಲಿ ನೀವು ಕಂಗೊಳಿಸುವಿರಿ.</verse>
				<verse number="16">ಹೀಗೆ ನೀವು ನಡೆದುಕೊಂಡರೆ ನನ್ನ ಸೇವೆ ವ್ಯರ್ಥವಾಗದೆ, ಶ್ರಮೆ ನಿಷ್ಫಲವಾಗದೆ, ಫಲಪ್ರದವಾಯಿತೆಂದು ಕ್ರಿಸ್ತರ ದಿನದಂದು ನಾನು ಹೆಮ್ಮೆಪಡಬಹುದು.</verse>
				<verse number="17">ನಿಮ್ಮ ವಿಶ್ವಾಸವೆಂಬ ಬಲಿಕಾಣಿಕೆಯ ಮೇಲೆ ನನ್ನ ರಕ್ತವನ್ನು ಧಾರೆಯಾಗಿ ಹರಿಸಬೇಕಾಗಿಬಂದರೂ ನನಗೆ ಸಂತೋಷವೇ; ನಿಮ್ಮೆಲ್ಲರೊಡನೆ ಸೇರಿ ಸಂತೋಷಿಸುತ್ತೇನೆ.</verse>
				<verse number="18">ಅದೇ ರೀತಿ ನೀವು ಸಹ ನನ್ನೊಡನೆ ಸಂತೋಷದಿಂದ ಸಂಭ್ರಮಿಸಿರಿ.</verse>
				<verse number="19">ಪ್ರಭು ಯೇಸುವಿನ ಚಿತ್ತವಾದಲ್ಲಿ ತಿಮೊಥೇಯನನ್ನು ನಿಮ್ಮ ಬಳಿಗೆ ಬೇಗನೆ ಕಳುಹಿಸಬೇಕೆಂದಿದ್ದೇನೆ. ಆತನಿಂದ ನಿಮ್ಮ ಸಮಾಚಾರವನ್ನು ತಿಳಿದು ನಾನು ಹರ್ಷಗೊಳ್ಳುತ್ತೇನೆ.</verse>
				<verse number="20">ಆತನಂತೆ ನಿಷ್ಕಪಟವಾಗಿ ನಿಮ್ಮ ಯೋಗಕ್ಷೇಮವನ್ನು ಬಯಸುವವರು ಬೇರೆ ಯಾರೂ ಇಲ್ಲಿಲ್ಲ.</verse>
				<verse number="21">ಇತರರೆಲ್ಲರೂ ಸ್ವಕಾರ್ಯದಲ್ಲಿ ಮಗ್ನರಾಗಿರುವವರೇ ಹೊರತು ಯೇಸುಸ್ವಾಮಿಯ ಕಾರ್ಯದಲ್ಲಿ ನಿರತರಾಗಿಲ್ಲ.</verse>
				<verse number="22">ತಿಮೊಥೇಯನ ಯೋಗ್ಯತೆಯನ್ನು ನೀವು ಬಲ್ಲಿರಿ. ತಂದೆಯೊಂದಿಗೆ ಮಗನು ದುಡಿಯುವಂತೆ, ಶುಭಸಂದೇಶದ ಸೇವೆಯಲ್ಲಿ ನನ್ನೊಂದಿಗೆ ಆತನು ದುಡಿದಿದ್ದಾನೆ.</verse>
				<verse number="23">ನನ್ನ ಬಗ್ಗೆ ನಡೆಯುತ್ತಿರುವ ವಿಚಾರಣೆಯ ಫಲಿತಾಂಶ ತಿಳಿದ ಕೂಡಲೇ ಆತನನ್ನು ನಿಮ್ಮ ಬಳಿಗೆ ಕಳುಹಿಸುತ್ತೇನೆ.</verse>
				<verse number="24">ಅಲ್ಲದೆ, ದೇವರ ಚಿತ್ತವಿದ್ದರೆ, ನಾನೇ ನಿಮ್ಮಲ್ಲಿಗೆ ಬೇಗನೆ ಬರುವೆನೆಂಬ ದೃಢನಂಬಿಕೆಯೂ ನನಗಿದೆ.</verse>
				<verse number="25">ನನಗೆ ನೆರವಾಗಲು ನೀವು ಕಳುಹಿಸಿದ ಸಹೋದರ ಎಪಫ್ರೋದಿತನು ನಿಮ್ಮಲ್ಲಿಗೆ ಹಿಂದಿರುಗುವುದು ಅವಶ್ಯವೆಂದು ಭಾವಿಸುತ್ತೇನೆ. ಅವನು ನನ್ನೊಂದಿಗೆ ದುಡಿಯುತ್ತಾ, ಹೋರಾಡುತ್ತಾ ಬಂದಿದ್ದಾನೆ.</verse>
				<verse number="26">ನಿಮ್ಮನ್ನೆಲ್ಲಾ ನೋಡಲು ಅವನು ಹಂಬಲಿಸುತ್ತಿದ್ದಾನೆ. ತಾನು ಅಸ್ವಸ್ಥನಾದ ಸುದ್ದಿಯು ನಿಮ್ಮ ಕಿವಿಗೆ ಮುಟ್ಟಿತೆಂದು ತಿಳಿದು ಬಹಳ ವ್ಯಸನಪಡುತ್ತಿದ್ದಾನೆ.</verse>
				<verse number="27">ಅವನು ಅಸ್ವಸ್ಥನಾದದ್ದು ನಿಜ; ಸಾವಿನ ದವಡೆಯಿಂದ ಪಾರಾದದ್ದೂ ನಿಜ. ದೇವರ ಕರುಣೆ ಅವನ ಮೇಲೆ ಮಾತ್ರವಲ್ಲದೆ ನನ್ನ ಮೇಲೂ ಇದ್ದುದರಿಂದ ನನಗೆ ದುಃಖದ ಮೇಲೆ ದುಃಖ ಬರದಂತಾಯಿತು.</verse>
				<verse number="28">ಎಪಫ್ರೋದಿತನನ್ನು ನಿಮ್ಮ ಬಳಿಗೆ ಕಳುಹಿಸಲು ತವಕದಿಂದಿದ್ದೇನೆ. ಅವನನ್ನು ಕಂಡು ನಿಮಗೆ ಆನಂದವಾಗುವುದು, ನನ್ನ ದುಃಖವೂ ಶಮನವಾಗುವುದು.</verse>
				<verse number="29">ಪ್ರಭುವಿನ ಹೆಸರಿನಲ್ಲಿ ನೀವು ಅವನನ್ನು ತುಂಬು ಹೃದಯದಿಂದ ಸ್ವಾಗತಿಸಿರಿ. ಅವನಂಥವರಿಗೆ ಸೂಕ್ತ ಗೌರವ ಸಲ್ಲಿಸಿರಿ.</verse>
				<verse number="30">ಕ್ರಿಸ್ತಯೇಸುವಿನ ಸೇವೆಯಲ್ಲಿ ಅವನು ಸತ್ತು ಬದುಕಿದ್ದಾನೆ. ನೀವು ಕೊಡಲು ಸಾಧ್ಯವಾಗದೆ ಹೋದ ನೆರವನ್ನು ಅವನು ನನಗೆ ಕೊಟ್ಟು ಸೇವೆಯನ್ನು ಪೂರ್ಣಗೊಳಿಸಿದ್ದಾನೆ.</verse>
			</chapter>
			<chapter number="3">
				<verse number="1">ಕೊನೆಯದಾಗಿ ಸಹೋದರರೇ, ಪ್ರಭುವಿನಲ್ಲಿ ಆನಂದಿಸಿರಿ. ನಾನು ನಿಮಗೆ ಮೊದಲೇ ತಿಳಿಸಿದಂತೆ ಇದನ್ನು ಮತ್ತೆ ಮತ್ತೆ ಬರೆಯುವುದರಲ್ಲಿ ನನಗೆ ಬೇಸರವಿಲ್ಲ; ಇದು ನಿಮ್ಮ ಹಿತಕ್ಕಾಗಿಯೇ.</verse>
				<verse number="2">ನಿಮಗೆ ಸುನ್ನತಿಯಾಗಬೇಕೆಂದು ಬೋಧಿಸುವವರ ವಿಷಯದಲ್ಲಿ ಜಾಗರೂಕರಾಗಿರಿ. ಅವರು ದುಷ್ಕರ್ಮಿಗಳು, ಶ್ವಾನಗಳಿಗೆ ಸಮಾನರು.</verse>
				<verse number="3">ನಿಜವಾದ ಸುನ್ನತಿ ಪಡೆದವರು ನಾವು, ಏಕೆಂದರೆ, ನಾವು ಪವಿತ್ರಾತ್ಮ ಅವರ ಪ್ರೇರಣೆಯಿಂದ ದೇವರನ್ನು ಆರಾಧಿಸುತ್ತೇವೆ. ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಹರ್ಷಿಸುತ್ತೇವೆ. ಬಾಹ್ಯಾಚರಣೆಗಳಲ್ಲೇ ನಂಬಿಕೆಯಿಡದೆ ಬಾಳುತ್ತೇವೆ.</verse>
				<verse number="4">ಇಂಥ ಬಾಹ್ಯಾಚರಣೆಯಲ್ಲಿ ನಂಬಿಕೆ ಇಡಲು ತಮಗೆ ಹಕ್ಕು ಇದೆಯೆಂದು ಯಾರಾದರೂ ಭಾವಿಸಿದರೆ, ನನ್ನ ಹಕ್ಕು ಅದಕ್ಕೂ ಮಿಗಿಲಾದುದು ಎಂದೇ ಹೇಳುತ್ತೇನೆ.</verse>
				<verse number="5">ಹುಟ್ಟಿದ ಎಂಟನೆಯ ದಿನ ನನಗೆ ಸುನ್ನತಿಯಾಯಿತು; ಹುಟ್ಟಿನಿಂದ ನಾನು ಇಸ್ರಯೇಲನು, ಬೆನ್ಯಮೀನ ಕುಲದವನು; ಅಪ್ಪಟ ಹಿಬ್ರಿಯನು,</verse>
				<verse number="6">ಧರ್ಮಶಾಸ್ತ್ರದ ದೃಷ್ಟಿಯಲ್ಲಿ ನಿಷ್ಠಾವಂತ ಫರಿಸಾಯನು; ಮತಾಶಕ್ತಿಯ ಹಿತದೃಷ್ಟಿಯಿಂದ ಧರ್ಮಸಭೆಯ ಹಿಂಸಕನು; ಧರ್ಮಶಾಸ್ತ್ರ ವಿಧಿನಿಯಮಗಳ ಪಾಲನೆಯಲ್ಲಿ ನಿಂದಾರಹಿತನು.</verse>
				<verse number="7">ಇವನ್ನೆಲ್ಲಾ ಲಾಭವೆಂದು ಪರಿಗಣಿಸಿದ್ದ ನಾನು ಈಗ ಕ್ರಿಸ್ತಯೇಸುವಿನ ಸಲುವಾಗಿ ನಷ್ಟವೆಂದೇ ಎಣಿಸುತ್ತೇನೆ.</verse>
				<verse number="8">ನಿಶ್ಚಯವಾಗಿಯೂ ನನ್ನ ಪ್ರಭು ಯೇಸುಕ್ರಿಸ್ತರನ್ನು ಅರಿತುಕೊಳ್ಳುವುದೇ ಉತ್ಕೃಷ್ಟವಾದುದೆಂದು ಮನದಟ್ಟಾಗಿರುವುದರಿಂದ ಸಮಸ್ತವನ್ನೂ ವ್ಯರ್ಥವೆಂದೇ ಎಣಿಸುತ್ತೇನೆ. ಅವರನ್ನು ಲಭ್ಯವಾಗಿಸಿಕೊಳ್ಳುವ ಸಲುವಾಗಿ ಎಲ್ಲವನ್ನೂ ತೊರೆದುಬಿಟ್ಟಿದ್ದೇನೆ, ಎಲ್ಲವನ್ನೂ ಕಸವೆಂದೇ ಪರಿಗಣಿಸುತ್ತೇನೆ.</verse>
				<verse number="9">ಧರ್ಮಶಾಸ್ತ್ರದ ಪಾಲನೆಯಿಂದ ದೊರಕುವ, ನನ್ನದೇ ಎಂದು ಹೇಳಿಕೊಳ್ಳಬಹುದಾದ ಸತ್ಸಂಬಂಧ ಯಾವುದೂ ನನಗಿಲ್ಲ. ಪ್ರತಿಯಾಗಿ, ನಾನು ಕ್ರಿಸ್ತಯೇಸುವಿನಲ್ಲಿಟ್ಟಿರುವ ವಿಶ್ವಾಸದ ಪ್ರಯುಕ್ತ ದೇವರೊಂದಿಗೆ ಸರಿಯಾದ ಸತ್ಸಂಬಂಧವನ್ನು ಹೊಂದಿದ್ದೇನೆ. ಈ ಸಂಬಂಧವು ದೇವರು ನನಗೆ ದಯಪಾಲಿಸಿರುವ ಅನುಗ್ರಹ. ನನ್ನ ವಿಶ್ವಾಸದ ಆಧಾರದ ಮೇಲೆ ಅವರೇ ನೀಡಿರುವ ಕೃಪಾವರ.</verse>
				<verse number="10">ಯೇಸುಸ್ವಾಮಿಯನ್ನು ಅರಿಯಬೇಕು; ಅವರ ಪುನರುತ್ಥಾನದ ಪ್ರಭಾವವನ್ನು ಅನುಭವಿಸಬೇಕು; ಅವರ ಯಾತನೆಗಳಲ್ಲಿ ಪಾಲುಗೊಳ್ಳಬೇಕು; ಅವರ ಮರಣದಲ್ಲಿ ಅವರಂತೆಯೇ ಆಗಬೇಕು - ಇದೇ ನನ್ನ ಹೆಬ್ಬಯಕೆ.</verse>
				<verse number="11">ಹೀಗೆ ನಾನೂ ಸಹ ಮೃತ್ಯುಂಜಯನಾಗುತ್ತೇನೆ ಎಂಬುದೇ ನನ್ನ ನಂಬಿಕೆ-ನಿರೀಕ್ಷೆ.</verse>
				<verse number="12">ಈಗಾಗಲೇ ನಾನಿದೆಲ್ಲವನ್ನೂ ಸಾಧಿಸಿದ್ದೇನೆ, ಪರಿಪೂರ್ಣತೆಯನ್ನು ಗಳಿಸಿದ್ದೇನೆ ಎಂದು ನೀವು ಭಾವಿಸಬಾರದು. ಕ್ರಿಸ್ತಯೇಸು ನನ್ನನ್ನು ಯಾವುದಕ್ಕಾಗಿ ತಮ್ಮವನನ್ನಾಗಿ ಮಾಡಿಕೊಂಡರೋ, ಅದನ್ನು ನನ್ನದಾಗಿಸಿಕೊಳ್ಳಲು ನಾನು ಪ್ರಯತ್ನಿಸುತ್ತಿದ್ದೇನೆ.</verse>
				<verse number="13">ಸಹೋದರರೇ, ಆ ಗುರಿಯನ್ನು ತಲುಪಿದ್ದೇನೆಂದು ನಾನೆಂದೂ ಹೇಳಿಕೊಂಡಿಲ್ಲ. ಆದರೆ ಇದು ನಿಜ. ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು, ಮುಂದಿನವುಗಳ ಮೇಲೆ ಕಣ್ಣಿಟ್ಟು ನಾನು ಓಡುತ್ತಿದ್ದೇನೆ.</verse>
				<verse number="14">ಮೇಲಣ ಬಹುಮಾನವನ್ನು ಪಡೆಯಲೆಂದು ದೇವರು ನನಗೆ ಕ್ರಿಸ್ತಯೇಸುವಿನ ಮುಖಾಂತರ ಕರೆ ನೀಡಿದ್ದಾರೆ. ಆ ಗುರಿಯನ್ನು ತಲುಪಲೆಂದೇ ನಾನು ಮುಂದೋಡುತ್ತಲಿದ್ದೇನೆ.</verse>
				<verse number="15">ನಮ್ಮಲ್ಲಿ ಪರಿಣತರಾದವರು ಈ ವಿಷಯದಲ್ಲಿ ಇದೇ ಮನೋಭಾವನೆಯಿಂದ ಇರಬೇಕು. ಯಾವುದಾದರೂ ಒಂದು ವಿಷಯದಲ್ಲಿ ನೀವು ಭಿನ್ನಾಭಿಪ್ರಾಯ ಉಳ್ಳವರಾಗಿದ್ದರೆ ದೇವರು ನಿಜಾಂಶವನ್ನು ಸ್ಪಷ್ಟೀಕರಿಸುವರು.</verse>
				<verse number="16">ಅಂತೂ, ಇದುವರೆಗೆ ನಾವು ಎಷ್ಟೇ ಮುಂದುವರೆದಿದ್ದರೂ ಅದೇ ಮಾರ್ಗದಲ್ಲಿ ಸಾಗೋಣ.</verse>
				<verse number="17">ಸಹೋದರರೇ, ನೀವು ನನ್ನನ್ನು ಅನುಸರಿಸಿರಿ. ನಮ್ಮಂತೆ ಆದರ್ಶಜೀವನ ನಡೆಸುವವರನ್ನು ಅನುಸರಿಸಿ ಬಾಳಿರಿ.</verse>
				<verse number="18">ಕ್ರಿಸ್ತಯೇಸುವಿನ ಶಿಲುಬೆಗೆ ವಿರೋಧವಾಗಿ ನಡೆಯುವವರು ಅನೇಕರಿದ್ದಾರೆ. ಇದನ್ನು ನಾನು ಹಲವಾರು ಸಾರಿ ತಿಳಿಸಿರುವಂತೆ ಈಗಲೂ ಅತೀವ ದುಃಖದಿಂದ ಹೇಳುತ್ತಿದ್ದೇನೆ.</verse>
				<verse number="19">ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.</verse>
				<verse number="20">ನಾವಾದರೋ ಸ್ವರ್ಗಸಾಮ್ರಾಜ್ಯದ ಪ್ರಜೆಗಳು, ಉದ್ಧಾರಕರಾದ ಪ್ರಭು ಯೇಸುಕ್ರಿಸ್ತರು ಪುನರಾಗಮಿಸುವುದು ಅಲ್ಲಿಂದಲೇ ಎಂದು ಎದುರುನೋಡುತ್ತಿದ್ದೇವೆ.</verse>
				<verse number="21">ಅವರು ಸಮಸ್ತವನ್ನು ಸ್ವಾಧೀನಪಡಿಸಿಕೊಳ್ಳುವರು; ನಶ್ವರವಾದ ನಮ್ಮ ದೀನದೇಹಗಳನ್ನು ತಮ್ಮ ಶಕ್ತಿಯಿಂದ ರೂಪಾಂತರಗೊಳಿಸಿ ತಮ್ಮ ತೇಜೋಮಯ ಶರೀರದಂತೆ ಮಾಡುವರು.</verse>
			</chapter>
			<chapter number="4">
				<verse number="1">ಹೀಗಿರಲಾಗಿ ಒಲವಿನ ಸಹೋದರರೇ, ನನ್ನ ಅತಿ ಪ್ರಿಯರೇ, ಆಪ್ತರೇ, ನನ್ನ ಮುದವೂ ಮುಕುಟವೂ ಆದವರೇ, ಪ್ರಭುವಿನಲ್ಲಿ ದೃಢ ವಿಶ್ವಾಸಿಗಳಾಗಿ ಬಾಳಿರಿ.</verse>
				<verse number="2">ಯುವೋದ್ಯಳು ಮತ್ತು ಸಂತುಕೆ ಇವರಲ್ಲಿ ನನ್ನದೊಂದು ಬಿನ್ನಹ: ನಿಮ್ಮ ಭಿನ್ನಾಭಿಪ್ರಾಯಗಳನ್ನು ತೊರೆದು ಪ್ರಭುವಿನಲ್ಲಿ ಒಂದಾಗಿ ಬಾಳಿರಿ.</verse>
				<verse number="3">ನನ್ನ ಜೊತೆ ಸೇವಕನಾದ ನೀನು ಈ ಮಹಿಳೆಯರಿಗೆ ನೆರವಾಗಬೇಕು. ಇವರು ಸಹ ಕ್ಲೇಮಂತನು ಮತ್ತು ಇತರ ಸಹಸೇವಕರೊಡನೆ ನನ್ನೊಂದಿಗೆ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ಸಹಕರಿಸಿರುತ್ತಾರೆ. ಇವರೆಲ್ಲರ ಹೆಸರುಗಳು ನಿತ್ಯಜೀವಬಾಧ್ಯರ ಪಟ್ಟಿಯಲ್ಲಿವೆ.</verse>
				<verse number="4">ಪ್ರಭುವಿನಲ್ಲಿ ನೀವು ಸತತವೂ ಆನಂದಿಸಿರಿ. ಆನಂದಿಸಬೇಕೆಂದು ಮತ್ತೆ ಒತ್ತಿ ಹೇಳುತ್ತೇನೆ.</verse>
				<verse number="5">ನಿಮ್ಮ ಸಹನೆ, ಸಹಾನುಭೂತಿ ಸರ್ವರಿಗೂ ತಿಳಿದಿರಲಿ. ಪ್ರಭುವಿನ ಪುನರಾಗಮನ ಸಮೀಪಿಸಿದೆ.</verse>
				<verse number="6">ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.</verse>
				<verse number="7">ಆಗ ಮನುಷ್ಯಗ್ರಹಿಕೆಗೂ ಮೀರಿದ ದೈವಶಾಂತಿಯು ನಿಮ್ಮ ಹೃನ್ಮನಗಳನ್ನು ಕ್ರಿಸ್ತೇಸುವಿನ ಅನ್ಯೋನ್ಯತೆಯಲ್ಲಿ ಸುರಕ್ಷಿತವಾಗಿ ಕಾಪಾಡುವುದು.</verse>
				<verse number="8">ಕಡೆಯದಾಗಿ ಸಹೋದರರೇ, ಯಾವುದು ಸತ್ಯವು-ಮಾನ್ಯವು, ನ್ಯಾಯವು-ಶುದ್ಧವು, ಪ್ರೀತಿಕರವು-ಮನೋಹರವು ಆಗಿದೆಯೋ ಯಾವುದು ಸದ್ಗುಣವು-ಸ್ತುತ್ಯಾರ್ಹವು ಆಗಿದೆಯೋ ಅಂಥವುಗಳಲ್ಲಿ ಮಗ್ನರಾಗಿರಿ.</verse>
				<verse number="9">ನೀವು ನನ್ನಿಂದ ಕಲಿತವು ಹಾಗೂ ಅರಿತವುಗಳನ್ನು, ಕೇಳಿದವು ಹಾಗೂ ಕಂಡವುಗಳನ್ನು ನಿಮ್ಮ ಜೀವಿತದಲ್ಲಿ ಕಾರ್ಯರೂಪಕ್ಕೆ ತನ್ನಿರಿ. ಆಗ ಶಾಂತಿದಾಯಕ ದೇವರು ನಿಮ್ಮ ಸಂಗಡ ಇರುವರು.</verse>
				<verse number="10">ನನ್ನ ಬಗ್ಗೆ ನಿಮಗಿರುವ ಮಮತೆಯು ಇಷ್ಟು ದಿನಗಳಾದ ಮೇಲೆ ಪುನಃ ಅರಳಿದ್ದಕ್ಕೆ ಪ್ರಭುವಿನಲ್ಲಿ ನಾನು ಬಹಳ ಸಂತೋಷಪಡುತ್ತೇನೆ. ಇಂಥ ಮಮತೆ ನಿಮಗೆ ಮೊದಲಿನಿಂದ ಇತ್ತಾದರೂ ಅದನ್ನು ವ್ಯಕ್ತಪಡಿಲು ನಿಮಗೆ ಸೂಕ್ತ ಸಂದರ್ಭ ಒದಗಿರಲಿಲ್ಲ.</verse>
				<verse number="11">ನಾನು ಯಾವುದೋ ಕೊರತೆಯಲ್ಲಿರುವೆನೆಂದು ಸೂಚಿಸಲು ಇದನ್ನು ಹೇಳುತ್ತಿಲ್ಲ. ನಾನು ಯಾವ ಸ್ಥಿತಿಯಲ್ಲಿದ್ದರೂ ತೃಪ್ತಿಯಿಂದಿರಲು ಕಲಿತುಕೊಂಡಿದ್ದೇನೆ.</verse>
				<verse number="12">ಬಡತನ ಇರಲಿ, ಸಿರಿತನವಿರಲಿ, ಕೊರತೆಯಿರಲಿ, ಸಮೃದ್ಧಿ ಇರಲಿ, ಹಸಿದಿರಲಿ, ಹೊಟ್ಟೆ ತುಂಬಿರಲಿ - ಯಾವ ಸ್ಥಿತಿಯಲ್ಲಿದ್ದರೂ, ಎಲ್ಲಾ ವೇಳೆಯಲ್ಲಿಯೂ ತೃಪ್ತನಾಗಿರುವ ರಹಸ್ಯವನ್ನು ತಿಳಿದಿದ್ದೇನೆ.</verse>
				<verse number="13">ಸರ್ವೇಶನ ಶಕ್ತಿಯಿಂದ ಸರ್ವವನ್ನೂ ಸಾಧಿಸುವ ಸಾಮರ್ಥ್ಯ ನನಗಿದೆ.</verse>
				<verse number="14">ಆದರೂ ನನ್ನ ಸಂಕಷ್ಟಗಳಲ್ಲಿ ಸಹಾಯ ಮಾಡಿದುದು ನಿಮ್ಮ ಸೌಜನ್ಯವೇ ಸರಿ.</verse>
				<verse number="15">ಫಿಲಿಪ್ಪಿಯ ಸಹೋದರರೇ, ನಾನು ಶುಭಸಂದೇಶವನ್ನು ಸಾರಲು ಹೊರಟ ಪ್ರಾರಂಭದ ದಿನಗಳಲ್ಲಿ ಮಕೆದೋನಿಯವನ್ನು ಬಿಟ್ಟುಹೋದಾಗ ನೀವಲ್ಲದೆ ಬೇರೆ ಯಾವ ಸಭೆಯೂ ನನ್ನ ಆಯ-ವ್ಯಯಗಳಲ್ಲಿ ನೆರವಾಗಿರಲಿಲ್ಲ. ಇದು ನಿಮಗೆ ತಿಳಿದ ವಿಷಯ.</verse>
				<verse number="16">ನಾನು ಥೆಸಲೋನಿಕದಲ್ಲಿದ್ದಾಗಲೂ ನನ್ನ ಕೊರತೆಯನ್ನು ನೀಗಿಸಲು ಒಂದೆರಡು ಬಾರಿ ಧನಸಹಾಯವನ್ನು ಕಳುಹಿಸಿದಿರಿ.</verse>
				<verse number="17">ನಿಮ್ಮಿಂದ ಸಹಾಯ ಪಡೆಯಬೇಕೆಂಬುದು ನನ್ನ ಉದ್ದೇಶವಲ್ಲ. ಆದರೆ ಈ ಸಹಾಯದಿಂದ ನಿಮಗೆ ಮುಂದೆ ದೊರಕುವ ಪ್ರತಿಫಲವು ಸಮೃದ್ಧಿಯಾಗಲೆಂದೇ ನನ್ನ ಇಚ್ಛೆ.</verse>
				<verse number="18">ನೀವು ಕಳುಹಿಸಿಕೊಟ್ಟಿದ್ದೆಲ್ಲವೂ ನನಗೆ ಸಂದಾಯವಾಗಿದೆ. ಈಗ ಅಗತ್ಯಕ್ಕಿಂತಲೂ ಅಧಿಕವಾಗಿದೆ, ಯಥೇಚ್ಛವಾಗಿದೆ. ಎಪಫ್ರೋದಿತನ ಮೂಲಕ ನೀವು ಕಳುಹಿಸಿದ್ದೆಲ್ಲವೂ ನನಗೆ ತಲುಪಿದೆ. ನಿಮ್ಮ ಕೊಡುಗೆ ಸುಗಂಧ ಕಾಣಿಕೆಯಾಗಿದೆ, ದೇವರಿಗೆ ಮೆಚ್ಚಿಗೆಯಾದ ಇಷ್ಟಾರ್ಥ ಬಲಿಯಾಗಿದೆ.</verse>
				<verse number="19">ನನ್ನ ದೇವರು ತಮ್ಮ ಮಹದೈಶ್ವರ್ಯದಿಂದ ನಿಮ್ಮ ಅಗತ್ಯಗಳನ್ನೆಲ್ಲಾ ಕ್ರಿಸ್ತಯೇಸುವಿನ ಮುಖಾಂತರ ಪೂರೈಸುವರು.</verse>
				<verse number="20">ನಮ್ಮ ತಂದೆಯಾದ ದೇವರಿಗೆ ನಿರಂತವೂ ಮಹಿಮೆ ಸಲ್ಲಲಿ!</verse>
				<verse number="21">ಕ್ರಿಸ್ತಯೇಸುವಿನಲ್ಲಿ ಎಲ್ಲ ದೇವಜನರಿಗೂ ನನ್ನ ವಂದನೆಗಳನ್ನು ತಿಳಿಸಿರಿ. ನನ್ನೊಡನೆ ಇರುವ ಸಹೋದರರು ನಿಮಗೆ ತಮ್ಮ ಶುಭಾಶಯಗಳನ್ನು ಕಳುಹಿಸಿದ್ದಾರೆ.</verse>
				<verse number="22">ಅಲ್ಲದೆ, ಇಲ್ಲಿರುವ ದೇವಜನರೆಲ್ಲರೂ ವಿಶೇಷವಾಗಿ ಚಕ್ರವರ್ತಿಯ ಅರಮನೆಯಲ್ಲಿರುವ ಕ್ರೈಸ್ತವಿಶ್ವಾಸಿಗಳು ತಮ್ಮ ಪ್ರಣಾಮಗಳನ್ನು ಸಲ್ಲಿಸಿದ್ದಾರೆ.</verse>
				<verse number="23">ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೆಲ್ಲರಲ್ಲಿ ಇರಲಿ!</verse>
			</chapter>
		</book>
		<book number="51">
			<chapter number="1">
				<verse number="1">ಕೊಲೊಸ್ಸೆಯಲ್ಲಿರುವ ದೇವಜನರಿಗೆ ಹಾಗೂ ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಸಹೋದರರಿಗೆ -</verse>
				<verse number="2">ದೇವರ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾದ ಪೌಲನು ಮತ್ತು ಸಹೋದರ ತಿಮೊಥೇಯನು ಬರೆಯುವ ಪತ್ರ. ನಮ್ಮ ತಂದೆಯಾದ ದೇವರ ಅನುಗ್ರಹವೂ ಶಾಂತಿ ಸಮಾಧಾನವೂ ನಿಮ್ಮಲ್ಲಿರಲಿ!</verse>
				<verse number="3">ನೀವು ಪ್ರಭು ಯೇಸುಕ್ರಿಸ್ತರಲ್ಲಿ ಇಟ್ಟಿರುವ ವಿಶ್ವಾಸ ಹಾಗೂ ದೇವಜನರಲ್ಲಿ ನೀವು ಇರಿಸಿರುವ ಪ್ರೀತಿ ಇವುಗಳ ಬಗ್ಗೆ ನಾವು ಕೇಳಿದ್ದೇವೆ. ಇದಕ್ಕಾಗಿ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಲ್ಲಿ ಪ್ರಾರ್ಥಿಸುವಾಗಲೆಲ್ಲ ನಿಮಗಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.</verse>
				<verse number="4"></verse>
				<verse number="5">ಸತ್ಯ ವಾಕ್ಯದ, ಅಂದರೆ ಶುಭಸಂದೇಶದ ಮೂಲಕ ನೀವು ಕೇಳಿ ತಿಳಿದಂಥ ಹಾಗೂ ನಿರೀಕ್ಷಿಸುವಂಥ ಸೌಭಾಗ್ಯವನ್ನು ಸ್ವರ್ಗಲೋಕದಲ್ಲಿ ನಿಮಗಾಗಿ ಕಾದಿರಿಸಲಾಗಿದೆ.</verse>
				<verse number="6">ದೇವಾನುಗ್ರಹದ ಸತ್ಯಾರ್ಥವನ್ನು ನೀವು ತಿಳಿದ ದಿನದಿಂದಲೂ ನಿಮ್ಮಲ್ಲಿ ಶುಭಸಂದೇಶವು ಹೇಗೆ ಫಲಭರಿತವಾಗುತ್ತಿದೆಯೋ ಹಾಗೆ ಈ ಶುಭಸಂದೇಶವು ಜಗತ್ತಿನ ಎಲ್ಲೆಡೆಯೂ ಹಬ್ಬಿಹರಡುತ್ತಲಿದೆ.</verse>
				<verse number="7">ಈ ಶುಭಸಂದೇಶವನ್ನು ಕ್ರಿಸ್ತಯೇಸುವಿನ ನಂಬಿಕಸ್ಥ ದಾಸನೂ ನಮ್ಮ ಜೊತೆಯ ಸೇವಕನೂ ಆದ ಎಪಫ್ರನಿಂದ ಕಲಿತುಕೊಂಡಿದ್ದೀರಿ.</verse>
				<verse number="8">ಪವಿತ್ರಾತ್ಮ ಅವರು ನಿಮಗೆ ಅನುಗ್ರಹಿಸಿದ ಪ್ರೀತಿಯ ಬಗ್ಗೆ ನಮಗೆ ತಿಳಿಸಿದವನು ಸಹ ಆತನೇ.</verse>
				<verse number="9">ಹೀಗಿರುವುದರಿಂದ ಈ ವಿಷಯವನ್ನು ನಾವು ಕೇಳಿದ ದಿನದಿಂದಲೂ ನಿಮಗಾಗಿ ಸದಾ ಪ್ರಾರ್ಥಿಸುತ್ತಲೇ ಇದ್ದೇವೆ. ನೀವು ಪರಿಪೂರ್ಣ ವಿವೇಕದಿಂದಲೂ ಆಧ್ಯಾತ್ಮಿಕ ಜ್ಞಾನದಿಂದಲೂ ದೇವರ ಚಿತ್ತವನ್ನು ಸಂಪೂರ್ಣವಾಗಿ ಅರಿಯಬೇಕೆಂಬುದೇ ನಮ್ಮ ಕೋರಿಕೆ.</verse>
				<verse number="10">ಆಗ ಎಲ್ಲ ವಿಷಯಗಳಲ್ಲಿಯೂ ಪ್ರಭುಯೇಸು ಮೆಚ್ಚುವ ರೀತಿಯಲ್ಲಿ ನೀವು ಜೀವಿಸುವಿರಿ. ನಾನಾ ತರಹದ ಸತ್ಕಾರ್ಯಗಳನ್ನು ಕೈಗೊಳ್ಳುವಿರಿ. ಸತ್ಫಲವನ್ನೀಯುವ ದೈವಜ್ಞಾನದಲ್ಲಿ ವೃದ್ಧಿಹೊಂದುವಿರಿ.</verse>
				<verse number="11">ದೇವರ ಮಹಿಮಾಶಕ್ತಿಯಿಂದ ನೀವು ಬಲಗೊಂಡು ಎಲ್ಲವನ್ನೂ ತಾಳ್ಮೆಯಿಂದಲೂ ಸಮಾಧಾನದಿಂದಲೂ ಸಹಿಸಿಕೊಳ್ಳುವಿರಿ.</verse>
				<verse number="12">ಪಿತನಿಗೆ ಹರ್ಷದಿಂದ ಕೃತಜ್ಞತಾಸ್ತುತಿ ಸಲ್ಲಿಸುವಿರಿ. ಏಕೆಂದರೆ, ಬೆಳಕಿನಲ್ಲಿರುವ ದೇವಜನರಿಗೆ ಕಾಯ್ದಿರಿಸಿರುವ ಸ್ವಾಸ್ತ್ಯದಲ್ಲಿ ಪಾಲುಗಾರರಾಗಲು ನಿಮ್ಮನ್ನು ಯೋಗ್ಯರನ್ನಾಗಿ ಅವರು ಮಾಡಿದ್ದಾರೆ.</verse>
				<verse number="13">ದೇವರು ನಮ್ಮನ್ನು ಅಂಧಕಾರದ ಆಡಳಿತದಿಂದ ಬಿಡುಗಡೆಮಾಡಿ ತಮ್ಮ ಪುತ್ರನ ಸಾಮ್ರಾಜ್ಯಕ್ಕೆ ಸುರಕ್ಷಿತವಾಗಿ ತಂದಿದ್ದಾರೆ.</verse>
				<verse number="14">ಈ ಪುತ್ರನಲ್ಲಿ ನಮಗೆ ಪಾಪಕ್ಷಮೆ ದೊರಕಿದೆ, ವಿಮೋಚನೆ ಲಭಿಸಿದೆ.</verse>
				<verse number="15">ಅದೃಶ್ಯ ದೇವನ ಸದೃಶ್ಯರೂಪನು ಕ್ರಿಸ್ತ, ಸೃಷ್ಟಿಗೆಲ್ಲ ಜೇಷ್ಠಪುತ್ರನಾತ,</verse>
				<verse number="16">ಇರಲಿ ಇಹದಲಿ, ಇರಲಿ ಪರದಲಿ, ಅಶರೀರ ಒಡೆಯರಾಗಲಿ, ಒಡೆತನವಾಗಲಿ, ಅಧಿಕಾರಿಗಳಾಗಲಿ, ಆಧಿಪತ್ಯವಾಗಿರಲಿ, ಆದುದೆಲ್ಲವೂ ಆತನಲಿ, ಆತನಿಂದ, ಆತನಿಗಾಗಿ.</verse>
				<verse number="17">ಎಲ್ಲಕ್ಕೂ ಮೊದಲೇ ಇರುವನಾತ, ಸಮಸ್ತಕ್ಕೂ ಆಧಾರಭೂತ.</verse>
				<verse number="18">ಸಭೆಯೆಂಬ ಶರೀರಕ್ಕೆ ಶಿರಸ್ಸಾತ, ಆದಿಸಂಭೂತ, ಆಗಲೆಲ್ಲದರಲೂ ಅಗ್ರಸ್ಥ, ಸತ್ತವರಿಂದ ಮೊದಲೆದ್ದು ಬಂದನಾತ.</verse>
				<verse number="19">ಆ ಸುತನಲ್ಲೇ ಇರಿಸಲು ನಿರ್ಧರಿಸಿದನು ಪಿತದೇವ ತನ್ನ ಸರ್ವಸಂಪೂರ್ಣತೆಯನು.</verse>
				<verse number="20">ಶಿಲುಬೆಯಿಂದಾತ ಹರಿಸಿದ ರಕುತದಿಂದ ಆಗುತಲಿದೆ ಶಾಂತಿಸಮಾಧಾನ, ನಡೆದಿದೆ ದೇವರೊಡನೆ ಸಂಧಾನ, ಇಹಪರಗಳೆಲ್ಲಕ್ಕೂ ಆತನ ಮುಖೇನ.</verse>
				<verse number="21">ಹಿಂದೆ, ನೀವು ಆಚಾರ-ವಿಚಾರಗಳಲ್ಲಿ ಕೆಟ್ಟವರಾಗಿದ್ದರಿಂದ ದೇವರ ವಿರೋಧಿಗಳಾಗಿದ್ದು ಅವರಿಂದ ದೂರವಿದ್ದಿರಿ.</verse>
				<verse number="22">ಈಗಲಾದರೋ ಯೇಸುಕ್ರಿಸ್ತರ ದೈವಿಕ ಮರಣದ ಫಲವಾಗಿ ನಿಮಗೂ ದೇವರಿಗೂ ಸಂಧಾನ ನಡೆದಿದೆ. ಹೀಗೆ ದೇವರು ನಿಮ್ಮನ್ನು ತಮ್ಮ ಸನ್ನಿಧಿಗೆ ಸೇರಿಸಿಕೊಳ್ಳಲು ನೀವು ಪವಿತ್ರರೂ ನಿಷ್ಕಳಂಕರೂ ದೋಷರಹಿತರೂ ಆಗಿರುವಂತೆ ಮಾಡಿದ್ದಾರೆ.</verse>
				<verse number="23">ಇನ್ನು ನೀವು ವಿಶ್ವಾಸದಲ್ಲಿ ದೃಢವಾಗಿ ಮುನ್ನಡೆಯಬೇಕು. ಶುಭಸಂದೇಶವನ್ನು ಕೇಳಿದಾಗ ನೀವು ಹೊಂದಿದ ಭರವಸೆಯನ್ನು ಕಳೆದುಕೊಳ್ಳದಂತೆ ಜಾಗರೂಕರಾಗಿರಬೇಕು. ಪೌಲನಾದ ನಾನು ಇದೇ ಶುಭಸಂದೇಶದ ಪ್ರಚಾರಕ. ಈ ಶುಭಸಂದೇಶವನ್ನು ಜಗತ್ತಿನಲ್ಲಿರುವ ಸರ್ವಸೃಷ್ಟಿಗೂ ಸಾರಲಾಗುತ್ತಿದೆ.</verse>
				<verse number="24">ಈಗ ನಿಮಗೋಸ್ಕರ ಸಂಕಟಪಡುವುದರಲ್ಲಿ ನನಗೆ ಸಂತೋಷವಿದೆ. ಕ್ರಿಸ್ತಯೇಸು ತಮ್ಮ ಶರೀರವಾದ ಧರ್ಮಸಭೆಗೋಸ್ಕರ ಅನುಭವಿಸಬೇಕಾದ ಯಾತನೆಗಳಲ್ಲಿ ಉಳಿದದ್ದನ್ನು ನಾನು ನನ್ನ ದೇಹದಲ್ಲಿ ಅನುಭವಿಸಿ ಪೂರ್ಣಗೊಳಿಸುತ್ತಿದ್ದೇನೆ.</verse>
				<verse number="25">ದೇವರು ನನ್ನನ್ನು ಧರ್ಮಸಭೆಯ ದಾಸನನ್ನಾಗಿ ನೇಮಿಸಿದ್ದಾರೆ. ನಿಮ್ಮ ಹಿತಕ್ಕಾಗಿ ಒಂದು ಮಹತ್ವದ ಕಾರ್ಯವನ್ನು ನನಗೆ ವಹಿಸಿರುತ್ತಾರೆ.</verse>
				<verse number="26">ಯುಗಯುಗಾಂತರಗಳಿಂದಲೂ ತಲತಲಾಂತರಗಳಿಂದಲೂ ನಿಗೂಢವಾಗಿದ್ದ ರಹಸ್ಯಗಳನ್ನು, ಅಂದರೆ ತಮ್ಮ ವಾಕ್ಯವನ್ನು, ಈಗ ತಮ್ಮ ಜನರಿಗೆ ದೇವರು ಪ್ರಕಟಿಸಿದ್ದಾರೆ.</verse>
				<verse number="27">ಈ ರಹಸ್ಯ ಎಷ್ಟು ಶ್ರೀಮಂತವಾದುದು, ಎಷ್ಟು ಮಹಿಮಾನ್ವಿತವಾದುದು ಎಂಬುದನ್ನು ಎಲ್ಲಾ ಜನಾಂಗಗಳಿಗೂ ತಿಳಿಸಲು ದೇವರು ಇಚ್ಛಿಸಿದರು. ಕ್ರಿಸ್ತಯೇಸು ನಿಮ್ಮಲ್ಲಿದ್ದು ಮುಂದಿನ ಮಹಿಮೆಯ ನಿರೀಕ್ಷೆಗೆ ಆಧಾರವಾಗಿದ್ದಾರೆ ಎಂಬುದೇ ಈ ರಹಸ್ಯ.</verse>
				<verse number="28">ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.</verse>
				<verse number="29">ನನ್ನನ್ನು ಚೇತನಗೊಳಿಸುತ್ತಿರುವ ಯೇಸುಕ್ರಿಸ್ತರ ಶಕ್ತಿಯಿಂದ ಈ ಗುರಿಯನ್ನು ಸಾಧಿಸಲು ಶ್ರಮವಹಿಸಿ ಹೋರಾಡುತ್ತಿದ್ದೇನೆ.</verse>
			</chapter>
			<chapter number="2">
				<verse number="1">ನಿಮಗಾಗಿಯೂ ಲವೊದಿಕೀಯದವರಿಗಾಗಿಯೂ ಹಾಗೂ ನನ್ನ ನೇರ ಪರಿಚಯ ಇಲ್ಲದವರಿಗಾಗಿಯೂ ನಾನು ಎಷ್ಟು ಶ್ರಮಿಸುತ್ತಿದ್ದೇನೆಂಬುದನ್ನು ತಿಳಿಸಬಯಸುತ್ತೇನೆ.</verse>
				<verse number="2">ಇದರಿಂದ ಅವರು ಅಂತರಂಗದಲ್ಲಿ ಉತ್ತೇಜನಗೊಂಡು ಪ್ರೀತಿಯಲ್ಲಿ ಒಂದಾಗಬೇಕು; ನೈಜ ಅರಿವಿನಿಂದ ಅವರಿಗೆ ಪೂರ್ಣಜ್ಞಾನ ಲಭಿಸಬೇಕು ಎಂಬುದೇ ನನ್ನ ಆಶಯ. ಆಗ ಅವರು ದೇವರ ರಹಸ್ಯವನ್ನು, ಅಂದರೆ ಕ್ರಿಸ್ತಯೇಸುವನ್ನು ಅರಿತುಕೊಳ್ಳಲು ಸಾಧ್ಯ.</verse>
				<verse number="3">ಕ್ರಿಸ್ತಯೇಸುವಿನಲ್ಲಿಯೇ ಜ್ಞಾನ, ವಿವೇಕ ಎಂಬ ಸಿರಿಸಂಪತ್ತು ಅಡಗಿದೆ.</verse>
				<verse number="4">ಯಾರೂ ತಮ್ಮ ಕುತರ್ಕಗಳಿಂದ ನಿಮ್ಮನ್ನು ಮೋಸಗೊಳಿಸದಿರಲಿ.</verse>
				<verse number="5">ನಾನು ಶಾರೀರಿಕವಾಗಿ ನಿಮ್ಮಿಂದ ದೂರವಿದ್ದರೂ ಆತ್ಮಿಕವಾಗಿ ನಿಮ್ಮೊಂದಿಗಿದ್ದೇನೆ. ನಿಮ್ಮ ಕ್ರಮಬದ್ಧ ನಡತೆಯನ್ನೂ ಕ್ರಿಸ್ತಯೇಸುವಿನಲ್ಲಿ ನಿಮಗಿರುವ ಸ್ಥಿರವಿಶ್ವಾಸವನ್ನೂ ನೋಡುವಾಗ ನನಗೆ ಅಮಿತಾನಂದವಾಗುತ್ತದೆ.</verse>
				<verse number="6">ನೀವು ಕ್ರಿಸ್ತಯೇಸುವನ್ನು ಪ್ರಭುವಾಗಿ ಸ್ವೀಕರಿಸಿರುವುದರಿಂದ, ಅವರೊಡನೆ ಐಕ್ಯತೆಯಿಂದ ಬಾಳಿರಿ.</verse>
				<verse number="7">ಅವರಲ್ಲಿ ಸ್ಥಿರವಾಗಿರಿ. ಅವರನ್ನೇ ಅವಲಂಬಿಸಿ ನಿಮ್ಮ ಬಾಳೆಂಬ ಸೌಧವನ್ನು ನಿರ್ಮಿಸಿರಿ. ನೀವು ಕಲಿತುಕೊಂಡಿರುವಂತೆ ನಿಮ್ಮ ವಿಶ್ವಾಸ ಅವರಲ್ಲಿ ದೃಢವಾಗಿರಲಿ. ಕೃತಜ್ಞತೆಯು ನಿಮ್ಮಲ್ಲಿ ಉಕ್ಕೇರಲಿ.</verse>
				<verse number="8">ಪ್ರಪಂಚದ ಪ್ರಬಲ ಶಕ್ತಿಗಳಿಂದಲೂ ಮಾನವ ವಿವೇಚನೆಯ ಶುಷ್ಕತರ್ಕ ಸಿದ್ಧಾಂತಗಳಿಂದಲೂ ಯಾರೂ ನಿಮ್ಮನ್ನು ಮೋಸಗೊಳಿಸಿ ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಇವುಗಳು ಪ್ರಾಪಂಚಿಕ ಪಾರಂಪರ್ಯಕ್ಕೆ ಮತ್ತು ವಿಶ್ವದ ಮೂಲಭೂತ ಶಕ್ತಿಗಳಿಗೆ ಸಂಬಂಧಿಸಿದವುಗಳೇ ಹೊರತು ಯೇಸುಕ್ರಿಸ್ತರಿಗಲ್ಲ.</verse>
				<verse number="9">ದೈವತ್ವದ ಸಂಪೂರ್ಣತೆ ಸಶರೀರವಾಗಿ ಯೇಸುಕ್ರಿಸ್ತರಲ್ಲಿ ನೆಲೆಗೊಂಡಿದೆ.</verse>
				<verse number="10">ಸಕಲ ಆಧಿಪತ್ಯಕ್ಕೂ ಅಧಿಕಾರಕ್ಕೂ ಶಿರಸ್ಸು ಅವರೇ. ಅವರಲ್ಲಿ ಮಾತ್ರ ನೀವು ಪರಿಪೂರ್ಣತೆಯನ್ನು ಹೊಂದಲು ಸಾಧ್ಯ.</verse>
				<verse number="11">ಕ್ರಿಸ್ತಯೇಸುವಿನಲ್ಲಿಯೇ ನೀವು ಸುನ್ನತಿಯನ್ನು ಪಡೆದಿದ್ದೀರಿ. ಇದು ಶಾರೀರಿಕ ಸುನ್ನತಿಯಲ್ಲ, ಪಾಪಮಯ ಸ್ವಭಾವವನ್ನು ಕಿತ್ತೊಗೆಯುವ ಸುನ್ನತಿ. ಸ್ವಯಂ ಕ್ರಿಸ್ತಯೇಸುವೆ ಯೋಜಿಸಿದ ಸುನ್ನತಿ.</verse>
				<verse number="12">ದೀಕ್ಷಾಸ್ನಾನದಲ್ಲಿ ನೀವು ಅವರೊಂದಿಗೆ ಸಮಾಧಿಯಾದಿರಿ. ಕ್ರಿಸ್ತಯೇಸುವನ್ನು ಮೃತರ ಮಧ್ಯದಿಂದ ದೇವರು ತಾವೇ ಎಬ್ಬಿಸಿದರು. ಈ ದೇವರ ಶಕ್ತಿಯಲ್ಲಿ ನೀವು ವಿಶ್ವಾಸವಿಟ್ಟಿರುವುದರಿಂದ ದೀಕ್ಷಾಸ್ನಾನದಲ್ಲಿಯೇ ನಿಮ್ಮನ್ನು ಕ್ರಿಸ್ತಯೇಸುವಿನೊಂದಿಗೆ ಎಬ್ಬಿಸಲಾಯಿತು.</verse>
				<verse number="13">ನಿಮ್ಮ ಪಾಪಮಯ ಜೀವನದಿಂದಲೂ ಸುನ್ನತಿ ರಹಿತವಾದ ಸ್ವಭಾವದಿಂದಲೂ ಒಮ್ಮೆ ನೀವು ಮೃತರಾಗಿದ್ದೀರಿ. ಆದರೆ ಈಗ ದೇವರು ಕ್ರಿಸ್ತಯೇಸುವಿನೊಂದಿಗೆ ನಿಮ್ಮನ್ನು ಜೀವಂತಗೊಳಿಸಿದ್ದಾರೆ.</verse>
				<verse number="14">ಅವರು ನಮ್ಮ ಎಲ್ಲಾ ಪಾಪಗಳನ್ನು ಕ್ಷಮಿಸಿದ್ದಾರೆ. ನಮ್ಮನ್ನು ಬಂಧಿಸಿದ್ದ ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಕ್ರಿಸ್ತಯೇಸು ತೊಡೆದುಹಾಕಿದ್ದಲ್ಲದೆ ಅವುಗಳನ್ನು ಶಿಲುಬೆಗೆ ಜಡಿದು ನಮ್ಮನ್ನು ಬಿಡುಗಡೆ ಮಾಡಿದ್ದಾರೆ.</verse>
				<verse number="15">ಬಲಾಢ್ಯ ಒಡೆಯರನ್ನೂ ಅಧಿಕಾರಿಗಳನ್ನೂ ನಿರಾಯುಧರನ್ನಾಗಿ ಮಾಡಿ, ತಾವು ಗಳಿಸಿದ ಜಯದ ನಿಮಿತ್ತ ಜನರೆಲ್ಲರ ಮುಂದೆ ಶಿಲುಬೆಯ ವಿಜಯೋತ್ಸವದಲ್ಲಿ ಅವರನ್ನು ಸೆರೆಯಾಳುಗಳನ್ನಾಗಿ ಪ್ರದರ್ಶಿಸಿದ್ದಾರೆ.</verse>
				<verse number="16">ಹೀಗಿರಲಾಗಿ, ತಿಂಡಿತೀರ್ಥದ ವಿಷಯದಲ್ಲಾಗಲಿ, ಹಬ್ಬಹುಣ್ಣಿಮೆಗಳ ವಿಚಾರದಲ್ಲಾಗಲಿ, ಸಬ್ಬತ್‍ದಿನವನ್ನು ಆಚರಿಸುವ ರೀತಿಯಲ್ಲಾಗಲಿ ನಿಮ್ಮನ್ನು ದೋಷಿಗಳೆಂದು ಯಾರೂ ದೂರದಿರಲಿ.</verse>
				<verse number="17">ಇವುಗಳೆಲ್ಲವೂ ಬರಲಿದ್ದುದರ ಛಾಯೆ ಮಾತ್ರ; ಕ್ರಿಸ್ತಯೇಸುವೇ ಅವುಗಳ ಸತ್ಯಸ್ವರೂಪ.</verse>
				<verse number="18">ನಿಮ್ಮಲ್ಲಿ ಕೆಲವರು ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದಾರೆ. ಲೌಕಿಕ ಜ್ಞಾನದಿಂದ ನಿರರ್ಥಕವಾಗಿ ಉಬ್ಬಿಕೊಂಡಿದ್ದಾರೆ. ತಾವು ಬಹಳ ವಿನಯಶಾಲಿಗಳೆಂದು ಹೆಚ್ಚಳಪಡುತ್ತಾರೆ. ಇಂಥವರು ನಿಮ್ಮನ್ನು ಕಡೆಗಾಣಿಸದಂತೆ ಎಚ್ಚರದಿಂದಿರಿ. ಇವರು ಯೇಸುಕ್ರಿಸ್ತರೆಂಬ ಶಿರಸ್ಸಿನಿಂದ ಬೇರ್ಪಟ್ಟಿದ್ದಾರೆ.</verse>
				<verse number="19">ಈ ಶಿರಸ್ಸಿನಿಂದಲೇ ಇಡೀ ದೇಹವು, ಕೀಲು-ನರಗಳ ಮೂಲಕ ಒಂದಾಗಿ ಸೇರಿ, ಪೋಷಣೆ ಪಡೆದು, ದೇವರು ನಿಯೋಜಿಸಿರುವ ಪ್ರಕಾರ ಬೆಳೆಯುತ್ತಲಿದೆ.</verse>
				<verse number="20">ನೀವು ಕ್ರಿಸ್ತಯೇಸುವಿನೊಡನೆ ಮೃತರಾಗಿರುವ ಕಾರಣ, ಪ್ರಾಕೃತ ಶಕ್ತಿಗಳ ಬಂಧನದಿಂದ ಬಿಡುಗಡೆ ಹೊಂದಿದ್ದೀರಿ. ಹೀಗಿರುವಲ್ಲಿ, ಪ್ರಾಪಂಚಿಕ ವಿಧಿನಿಯಮಗಳಿಗೆ ಒಳಪಟ್ಟು ಬಾಳುತ್ತಿರುವುದೇಕೆ?</verse>
				<verse number="21">‘ಇದನ್ನು ಮುಟ್ಟಬೇಡ,’ ‘ಅದನ್ನು ಸವಿಯಬೇಡ,’ ‘ಇನ್ನೊಂದನ್ನು ಬಳಸಬೇಡ', ಎಂಬ ಕಟ್ಟಳೆಗಳಿಗೇಕೆ ಒಳಗಾಗುತ್ತೀರಿ?</verse>
				<verse number="22">ಇವುಗಳೆಲ್ಲವೂ ಬಳಕೆಯಿಂದ ಅಳಿದುಹೋಗುತ್ತವೆ. ಅಲ್ಲದೆ, ಅವೆಲ್ಲವೂ ಮಾನವ ವ್ಯವಸ್ಥಿತ ಬೋಧನೆ ಹಾಗೂ ನಿಬಂಧನೆಗಳು.</verse>
				<verse number="23">ಸ್ವಕಲ್ಪಿತ ಆಚಾರವಿಧಿಗಳಿಂದಲೂ ಕಪಟ ವಿನಯದಿಂದಲೂ ಕಠಿಣ ದೇಹದಂಡನೆಯಿಂದಲೂ ಕೂಡಿರುವ ಈ ವಿಧಿನಿಯಮಗಳು ಹೊರನೋಟಕ್ಕೆ ಜಾಣ್ಮೆಯುಳ್ಳದಾಗಿ ಕಾಣಬಹುದು. ಆದರೂ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸಲು ಇವುಗಳು ಪ್ರಯೋಜನಕ್ಕೆ ಬರುವಂಥವುಗಳಲ್ಲ.</verse>
			</chapter>
			<chapter number="3">
				<verse number="1">ನೀವು ಯೇಸುಕ್ರಿಸ್ತರೊಂದಿಗೆ ಪುನರುತ್ಥಾನ ಹೊಂದಿರುವುದಾದರೆ ಸ್ವರ್ಗೀಯ ವಿಷಯಗಳ ಕಡೆಗೆ ಗಮನಕೊಡಿ. ಕ್ರಿಸ್ತಯೇಸು ಸ್ವರ್ಗದಲ್ಲಿ ದೇವರ ಬಲಗಡೆಯಲ್ಲಿ ಆಸೀನರಾಗಿದ್ದಾರೆ.</verse>
				<verse number="2">ನೀವು ಕ್ರಿಸ್ತಯೇಸುವಿನೊಂದಿಗೆ ಮರಣ ಹೊಂದಿರುವುದರಿಂದ ಅವರೊಂದಿಗೆ ನಿಮ್ಮ ಜೀವ ದೇವರಲ್ಲಿ ಮರೆಯಾಗಿದೆ. ನಿಮ್ಮ ಮನಸ್ಸು ಪ್ರಾಪಂಚಿಕ ವಿಷಯಗಳ ಮೇಲೆ ಅಲ್ಲ, ಸ್ವರ್ಗೀಯ ವಿಷಯಗಳ ಮೇಲೆ ಕೇಂದ್ರೀಕೃತವಾಗಿರಲಿ.</verse>
				<verse number="3"></verse>
				<verse number="4">ಕ್ರಿಸ್ತಯೇಸುವೇ ನಿಮ್ಮ ನೈಜ ಜೀವವಾಗಿದ್ದಾರೆ. ಅವರು ಪುನರಾಗಮಿಸುವಾಗ ನೀವೂ ಸಹ ಅವರ ಮಹಿಮೆಯಲ್ಲಿ ಪಾಲುಗಾರರಾಗಿ ಅವರೊಂದಿಗೆ ಪ್ರತ್ಯಕ್ಷರಾಗುವಿರಿ.</verse>
				<verse number="5">ನಿಮ್ಮಲ್ಲಿರುವ ಪ್ರಾಪಂಚಿಕ ಆಶೆ ಆಕಾಂಕ್ಷೆಗಳನ್ನು ತ್ಯಜಿಸಿರಿ. ಹಾದರ, ಅನೈತಿಕತೆ, ಕಾಮಾಭಿಲಾಷೆ, ದುರಾಲೋಚನೆ, ವಿಗ್ರಹಾರಾಧನೆಗೆ ಸಮವಾಗಿರುವ ಲೋಭ - ಇವುಗಳನ್ನು ದಮನಮಾಡಿರಿ.</verse>
				<verse number="6">ಇಂಥವುಗಳಿಗೆ ಈಡಾಗುವ ದುಷ್ಕರ್ಮಿಗಳು ದೇವರ ಕೋಪಾಗ್ನಿಗೆ ಗುರಿಯಾಗುತ್ತಾರೆ.</verse>
				<verse number="7">ಒಮ್ಮೆ ಇವೆಲ್ಲ ನಿಮ್ಮ ಜೀವನದ ರೀತಿನೀತಿಗಳಾಗಿದ್ದು ಇವುಗಳಲ್ಲೇ ಮಗ್ನರಾಗಿದ್ದೀರಿ.</verse>
				<verse number="8">ಈಗಲಾದರೋ ಕೋಪ, ರೋಷ, ಮತ್ಸರ - ಇವುಗಳನ್ನು ತ್ಯಜಿಸಿರಿ; ದೂಷಣೆ ಮತ್ತು ಹೊಲಸು ಮಾತುಗಳು ನಿಮ್ಮ ಬಾಯಿಂದ ಬರಕೂಡದು.</verse>
				<verse number="9">ಒಬ್ಬರಿಗೊಬ್ಬರು ಸುಳ್ಳು ಹೇಳಬೇಡಿ. ಏಕೆಂದರೆ, ನಿಮ್ಮಲ್ಲಿದ್ದ ಹಳೆಯ ಸ್ವಭಾವವನ್ನೂ ಅದಕ್ಕೆ ಸಂಬಂಧಿಸಿದ ದುರಭ್ಯಾಸಗಳನ್ನೂ ತೊರೆದುಬಿಟ್ಟಿದ್ದೀರಿ.</verse>
				<verse number="10">ಮಾತ್ರವಲ್ಲ, ನೂತನ ಸ್ವಭಾವವನ್ನು ಧರಿಸಿಕೊಂಡಿದ್ದೀರಿ. ನೀವು ಸೃಷ್ಟಿಕರ್ತನನ್ನು ಸಂಪೂರ್ಣವಾಗಿ ಅರಿತುಕೊಳ್ಳಬೇಕು ಎಂಬ ಉದ್ದೇಶದಿಂದ ಈ ಸ್ವಭಾವವನ್ನು ಅನುದಿನವೂ ನವೀಕರಿಸಲಾಗುತ್ತಿದೆ.</verse>
				<verse number="11">ಇಂಥ ಹೊಸ ಜೀವನದಲ್ಲಿ ಯೆಹೂದ್ಯ-ಗ್ರೀಕ, ಸುನ್ನತಿ ಹೊಂದಿದವ-ಸುನ್ನತಿ ಇಲ್ಲದವ, ನಾಗರಿಕ-ಅನಾಗರಿಕ, ಯಜಮಾನ-ಗುಲಾಮ ಎಂಬ ಭಿನ್ನಭೇದಗಳಿಲ್ಲ, ಕ್ರಿಸ್ತಯೇಸುವೇ ಸಮಸ್ತದಲ್ಲಿ ಸಮಸ್ತವೂ ಆಗಿದ್ದಾರೆ.</verse>
				<verse number="12">ನೀವು ದೇವರಿಂದ ಆಯ್ಕೆಯಾದವರು. ದೇವರಿಗೆ ಪ್ರಿಯವಾದವರು. ದೇವರ ಸ್ವಂತಜನರು. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳೇ ನಿಮ್ಮ ಆಭರಣಗಳಾಗಿರಲಿ.</verse>
				<verse number="13">ಒಬ್ಬರನ್ನೊಬ್ಬರು ಸೈರಿಸಿಕೊಳ್ಳಿ. ಒಬ್ಬನ ಮೇಲೆ ತಪ್ಪುಹೊರಿಸಲು ಕಾರಣವಿದ್ದರೂ ಕ್ಷಮಿಸಿಬಿಡಿ. ಪ್ರಭು ಯೇಸು ನಿಮ್ಮನ್ನು ಕ್ಷಮಿಸಿದಂತೆ ನೀವೂ ಇತರರನ್ನು ಕ್ಷಮಿಸಿರಿ.</verse>
				<verse number="14">ಎಲ್ಲಕ್ಕಿಂತ ಮಿಗಿಲಾಗಿ ನಿಮ್ಮಲ್ಲಿ ಪ್ರೀತಿಯಿರಲಿ. ಪ್ರೀತಿಯೇ ಸಮಸ್ತವನ್ನು ಸಂಪೂರ್ಣಗೊಳಿಸುವ ಬಂಧನ.</verse>
				<verse number="15">ನಿಮ್ಮ ಹೃನ್ಮನಗಳು ಕ್ರಿಸ್ತಯೇಸುವಿನ ಶಾಂತಿಸಮಾಧಾನದಿಂದ ತುಂಬಿರಲಿ. ನೀವು ಒಂದೇ‍ ಶರೀರವಾಗಿ ಬಾಳಲು ಕರೆಯಲ್ಪಟ್ಟಿದ್ದೀರಿ; ಕೃತಜ್ಞತೆ ಉಳ್ಳವರಾಗಿ ಜೀವಿಸಿರಿ.</verse>
				<verse number="16">ಕ್ರಿಸ್ತಯೇಸುವಿನ ವಾಕ್ಯ ನಿಮ್ಮಲ್ಲಿ ನೆಲೆಸಿ ಸಮೃದ್ಧಿಯಾಗಿ ಬೆಳೆಯಲಿ. ಜ್ಞಾನಸಂಪನ್ನರಾಗಿ ಒಬ್ಬರಿಗೊಬ್ಬರು ಉಪದೇಶಮಾಡಿರಿ ಹಾಗೂ ಬುದ್ಧಿ ಹೇಳಿಕೊಳ್ಳಿರಿ. ಕೃತಜ್ಞತೆಯುಳ್ಳವರಾಗಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಭಕ್ತಿಗೀತೆಗಳಿಂದಲೂ ಹೃದಯಾಂತರಾಳದಿಂದ ದೇವರಿಗೆ ಹಾಡಿರಿ.</verse>
				<verse number="17">ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.</verse>
				<verse number="18">ಮಹಿಳೆಯರೇ, ನಿಮ್ಮ ನಿಮ್ಮ ಪತಿಯರಿಗೆ ಪ್ರಭು ಮೆಚ್ಚುವಂತೆ ತಗ್ಗಿ ನಡೆದುಕೊಳ್ಳಿರಿ.</verse>
				<verse number="19">ಪುರುಷರೇ, ನಿಮ್ಮ ನಿಮ್ಮ ಪತ್ನಿಯರನ್ನು ಪ್ರೀತಿಸಿರಿ. ಅವರೊಡನೆ ಕಠಿಣವಾಗಿ ವರ್ತಿಸದಿರಿ.</verse>
				<verse number="20">ಮಕ್ಕಳೇ, ಎಲ್ಲದರಲ್ಲೂ ನಿಮ್ಮ ತಂದೆತಾಯಿಗಳ ಮಾತು ಕೇಳಿರಿ. ಹೀಗೆ ಮಾಡಿದರೆ ಪ್ರಭುವಿಗೆ ಮೆಚ್ಚುಗೆಯಾಗುತ್ತದೆ.</verse>
				<verse number="21">ತಂದೆತಾಯಿಯರೇ, ನಿಮ್ಮ ಮಕ್ಕಳನ್ನು ಕೆರಳಿಸಿ ಮನಕುಗ್ಗಿಸದಿರಿ.</verse>
				<verse number="22">ದಾಸ್ಯದಲ್ಲಿರುವವರೇ, ಎಲ್ಲಾ ವಿಷಯಗಳಲ್ಲೂ ನಿಮ್ಮ ನಿಮ್ಮ ಧಣಿಗಳಿಗೆ ವಿಧೇಯರಾಗಿರಿ. ಧಣಿಗಳನ್ನು ಮೆಚ್ಚಿಸುವ ಸಲುವಾಗಿ ಮುಖದಾಕ್ಷಿಣ್ಯದ ಸೇವೆಮಾಡಬೇಡಿ. ಪ್ರಭುವಿಗೆ ಭಯಪಟ್ಟು ಪ್ರಾಮಾಣಿಕತೆಯಿಂದ ದುಡಿಯಿರಿ.</verse>
				<verse number="23">ನೀವು ಏನನ್ನು ಮಾಡಿದರೂ ಪೂರ್ಣಮನಸ್ಸಿನಿಂದ ಮಾಡಿ; ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ಅಲ್ಲ, ಪ್ರಭುವನ್ನು ಮೆಚ್ಚಿಸುವುದಕ್ಕಾಗಿ ಮಾಡಿ.</verse>
				<verse number="24">ಅದಕ್ಕೆ ಪ್ರತಿಫಲವಾಗಿ ಪ್ರಭುವಿನಿಂದ ನೀವು ಸ್ವರ್ಗೀಯ ಬಾಧ್ಯತೆಯನ್ನು ಪಡೆಯುವಿರೆಂದು ನಿಮಗೆ ತಿಳಿದೇ ಇದೆ.</verse>
				<verse number="25">ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ಶಿಕ್ಷೆಯನ್ನು ಪಡೆಯುವನು. ದೇವರು ಪಕ್ಷಪಾತಿಯಲ್ಲ.</verse>
			</chapter>
			<chapter number="4">
				<verse number="1">ಯಜಮಾನರೇ, ಸ್ವರ್ಗಲೋಕದಲ್ಲಿ ನಿಮಗೂ ಒಬ್ಬ ಒಡೆಯನಿದ್ದಾನೆಂಬುದನ್ನು ತಿಳಿದುಕೊಂಡು ನಿಮ್ಮ ಮನೆಯಾಳುಗಳನ್ನು ನ್ಯಾಯಬದ್ಧ ರೀತಿಯಲ್ಲಿ ನೋಡಿಕೊಳ್ಳಿ.</verse>
				<verse number="2">ಪ್ರಾರ್ಥನಾ ಜೀವನ ನಡೆಸಿರಿ. ಪ್ರಾರ್ಥಿಸುವಾಗಲೆಲ್ಲಾ ಎಚ್ಚರವಾಗಿದ್ದು ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.</verse>
				<verse number="3">ಕ್ರಿಸ್ತಯೇಸುವಿನ ರಹಸ್ಯವನ್ನು ಪ್ರಚುರಪಡಿಸಲು ನಮಗೆ ಅವಕಾಶ ದೊರಕುವಂತೆ ಪ್ರಾರ್ಥಿಸಿರಿ. ಈ ಶುಭಸಂದೇಶದ ನಿಮಿತ್ತವೇ ನಾನು ಸೆರೆಯಲ್ಲಿ ಇದ್ದೇನೆಂಬುದು ನಿಮಗೆ ತಿಳಿದಿದೆ. ನಾನು ಶುಭಸಂದೇಶವನ್ನು ಸ್ಪಷ್ಟವಾಗಿಯೂ ಸರಳವಾಗಿಯೂ ಸಾರುವಂತೆ ಪ್ರಾರ್ಥಿಸಿರಿ.</verse>
				<verse number="4"></verse>
				<verse number="5">ನೆರೆಯವರ ವಿಷಯದಲ್ಲಿ ಜಾಣತನದಿಂದ ವರ್ತಿಸಿರಿ. ನಿಮಗಿರುವ ಸಮಯ ಸಂದರ್ಭವನ್ನು ಸದುಪಯೋಗಪಡಿಸಿಕೊಳ್ಳಿರಿ.</verse>
				<verse number="6">ನಿಮ್ಮ ಸಂಭಾಷಣೆ ಯಾವಾಗಲೂ ಹಿತಕರವಾಗಿದ್ದು ಇತರರನ್ನು ಆಕರ್ಷಿಸುವಂತಿರಲಿ. ನೀವು ಯಾರು ಯಾರಿಗೆ, ಹೇಗೆ ಉತ್ತರಿಸಬೇಕು ಎಂಬುದನ್ನು ಕಲಿತುಕೊಳ್ಳಿರಿ.</verse>
				<verse number="7">ನಮ್ಮ ಪ್ರಿಯ ಸಹೋದರ ತುಖಿಕನು ನನ್ನ ವಿಷಯದಲ್ಲಿ ನಿಮಗೆ ಎಲ್ಲಾ ವರ್ತಮಾನವನ್ನು ಕೊಡುವನು. ಆತನು ಪ್ರಾಮಾಣಿಕ ಸೇವಕನೂ ಪ್ರಭುವಿನ ಸೇವೆಯಲ್ಲಿ ನನ್ನ ಸಂಗಡಿಗನೂ ಆಗಿದ್ದಾನೆ.</verse>
				<verse number="8">ನನ್ನ ವಿಷಯದಲ್ಲಿ ನಿಮಗೆ ಎಲ್ಲವನ್ನೂ ತಿಳಿಸಿ, ನಿಮ್ಮನ್ನು ಹುರಿದುಂಬಿಸಿ, ಪ್ರೋತ್ಸಾಹಿಸುವುದಕ್ಕಾಗಿ ಆತನನ್ನು ನಿಮ್ಮ ಬಳಿಗೆ ಕಳುಹಿಸಿದ್ದೇನೆ.</verse>
				<verse number="9">ಆತನ ಜೊತೆಯಲ್ಲಿ ನಂಬಿಕಸ್ಥನಾದ ಪ್ರಿಯ ಸಹೋದರ ಒನೇಸಿಮನನ್ನು ಕಳುಹಿಸುತ್ತಿದ್ದೇನೆ. ಇವನು ನಿಮ್ಮ ಊರಿನ ಸಭೆಗೆ ಸೇರಿದವನು. ಇಲ್ಲಿ ನಡೆಯುವುದನ್ನೆಲ್ಲಾ ಇವರು ನಿಮಗೆ ತಿಳಿಸುವರು.</verse>
				<verse number="10">ನನ್ನೊಡನೆ ಸೆರೆಯಾಳಾಗಿರುವ ಅರಿಸ್ತಾರ್ಕನೂ ಬಾರ್ನಬನಿಗೆ ಹತ್ತಿರದ ನೆಂಟನಾದ ಮಾರ್ಕನೂ ನಿಮಗೆ ಶುಭಾಶಯಗಳನ್ನು ಕಳುಹಿಸಿದ್ದಾರೆ. ಮಾರ್ಕನು ನಿಮ್ಮ ಬಳಿಗೆ ಬಂದಾಗ ಅವನನ್ನು ಸ್ವಾಗತಿಸಿರಿ. ಅವನ ವಿಷಯದಲ್ಲಿ ನಿಮಗೆ ಸಲಹೆಗಳನ್ನು ಕೊಡಲಾಗಿದೆ.</verse>
				<verse number="11">ಯುಸ್ತನೆನಿಸಿಕೊಳ್ಳುವ ಯೇಸು ಕೂಡ ನಿಮಗೆ ವಂದನೆಗಳನ್ನು ತಿಳಿಸಿದ್ದಾನೆ. ಕ್ರೈಸ್ತರಾದ ಯೆಹೂದ್ಯರಲ್ಲಿ ಇವರೇ ನನ್ನೊಡನೆ ದೇವರ ಸಾಮ್ರಾಜ್ಯದ ಏಳಿಗೆಗಾಗಿ ದುಡಿಯುತ್ತಿರುವವರು. ಇವರಿಂದ ನನಗೆ ತುಂಬಾ ಆದರಣೆ ದೊರಕಿದೆ.</verse>
				<verse number="12">ಕ್ರಿಸ್ತಯೇಸುವಿನ ಸೇವಕನೂ ನಿಮ್ಮ ಸಭೆಗೆ ಸೇರಿದವನೂ ಆದ ಎಪಫ್ರನಿಂದಲೂ ನಿಮಗೆ ವಂದನೆಗಳು. ನೀವು ಮಾಡುವ ಎಲ್ಲಾ ಕಾರ್ಯಗಳಲ್ಲೂ ದೇವರ ಚಿತ್ತಕ್ಕೆ ವಿಧೇಯರಾಗಿ ಸ್ಥಿರ ಹಾಗೂ ಸಿದ್ಧ ಕ್ರೈಸ್ತರಾಗಿ ಬಾಳಬೇಕೆಂದು ಅವನು ನಿಮಗಾಗಿ ಸದಾ ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದಾನೆ.</verse>
				<verse number="13">ನಿಮಗಾಗಿಯೂ ಲವೊದಿಕೀಯ ಹಾಗೂ ಹಿರೆಯಾಪೊಲಿಯದ ಜನರಿಗಾಗಿಯೂ ಆತನು ಶ್ರಮವಹಿಸಿ ದುಡಿಯುತ್ತಿದ್ದಾನೆಂಬುದಕ್ಕೆ ನಾನೇ ಸಾಕ್ಷಿ.</verse>
				<verse number="14">ನಮ್ಮ ಪ್ರಿಯ ವೈದ್ಯನಾದ ಲೂಕನೂ ದೇಮಾಸನೂ ನಿಮಗೆ ವಂದನೆಗಳನ್ನು ತಿಳಿಸಿದ್ದಾರೆ.</verse>
				<verse number="15">ಲವೊದಿಕೀಯದಲ್ಲಿರುವ ನಮ್ಮ ಸಹೋದರರು ನಿಂಫಳು ಮತ್ತು ಆಕೆಯ ಮನೆಯಲ್ಲಿ ಸೇರುವ ಸಭೆಯವರು ಇವರೆಲ್ಲರಿಗೂ ನಮ್ಮ ಅಭಿನಂದನೆಗಳು.</verse>
				<verse number="16">ಈ ಪತ್ರವನ್ನು ನೀವು ಓದಿದ ಬಳಿಕ ಲವೊದಿಕೀಯದ ಸಭೆಯವರಿಗೆ ಓದಿ ಹೇಳುವ ವ್ಯವಸ್ಥೆಮಾಡಿರಿ. ಅಂತೆಯೇ, ಲವೊದಿಕೀಯದಿಂದ ಕಳಿಸಲಾಗುವ ಪತ್ರವನ್ನು ತರಿಸಿಕೊಂಡು ಓದಿರಿ.</verse>
				<verse number="17">ತನಗೆ ಒಪ್ಪಿಸಿದ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕೆಂಬುದಾಗಿ ಅರ್ಖಿಪ್ಪನಿಗೆ ತಿಳಿಸಿರಿ.</verse>
				<verse number="18">ಇದನ್ನು ಪೌಲನಾದ ನಾನೇ ಸ್ವತಃ ಬರೆಯುತ್ತಿದ್ದೇನೆ. ನಾನು ಸೆರೆಯಲ್ಲಿದ್ದೇನೆ ಎಂಬುದು ನಿಮಗೆ ನೆನಪಿರಲಿ. ಶುಭಾಶಯಗಳು! ದೈವಾನುಗ್ರಹ ನಿಮ್ಮಲ್ಲಿರಲಿ!</verse>
			</chapter>
		</book>
		<book number="52">
			<chapter number="1">
				<verse number="1">ಪಿತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸಲೋನಿಕದ ಸಭೆಯವರಿಗೆ - ಪೌಲ, ಸಿಲ್ವಾನ ಹಾಗೂ ತಿಮೊಥೇಯ ಇವರು ಬರೆಯುವ ಪತ್ರ. ದೈವಾನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!</verse>
				<verse number="2">ನಾವು ಪ್ರಾರ್ಥಿಸುವಾಗಲೆಲ್ಲಾ ನಿಮ್ಮನ್ನು ಸ್ಮರಿಸುತ್ತಾ, ನಿಮ್ಮೆಲ್ಲರಿಗಾಗಿ ದೇವರಿಗೆ ನಿರಂತರ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.</verse>
				<verse number="3">ವಿಶ್ವಾಸಭರಿತವಾದ ನಿಮ್ಮ ಕಾರ್ಯವನ್ನೂ ಪ್ರೀತಿಪೂರಿತವಾದ ನಿಮ್ಮ ದುಡಿಮೆಯನ್ನೂ ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ಅಚಲ ನಿರೀಕ್ಷೆಯನ್ನೂ ತಂದೆಯಾದ ದೇವರ ಸನ್ನಿಧಿಯಲ್ಲಿ ಜ್ಞಾಪಿಸಿಕೊಳ್ಳುತ್ತೇವೆ.</verse>
				<verse number="4">ಸಹೋದರರೇ, ನೀವು ದೇವರಿಗೆ ಪ್ರಿಯರು; ದೇವರಿಂದಲೇ ಆಯ್ಕೆಗೊಂಡವರು ಎಂದು ನಾವು ಬಲ್ಲೆವು.</verse>
				<verse number="5">ನಮ್ಮ ಶುಭಸಂದೇಶ ಕೇವಲ ಬಾಯಿಮಾತಿನದಲ್ಲ; ಅದು ಶಕ್ತಿಪೂರ್ಣವಾಗಿ ಪವಿತ್ರಾತ್ಮರ ಸಮೇತವಾಗಿ ಪೂರ್ಣ ಪ್ರಮಾಣದಿಂದ ಬಂದದ್ದು. ನಾವು ನಿಮ್ಮ ನಡುವೆಯಿದ್ದಾಗ, ನಿಮಗೋಸ್ಕರ ಹೇಗೆ ವರ್ತಿಸಿದೆವು ಎಂದು ನೀವೇ ಬಲ್ಲಿರಿ.</verse>
				<verse number="6">ನೀವು ನಮ್ಮನ್ನು ಹಾಗೂ ಪ್ರಭು ಯೇಸುವನ್ನು ಅನುಸರಿಸುವವರಾದಿರಿ. ಇದರಿಂದ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ಪವಿತ್ರಾತ್ಮ ಪ್ರೇರಿತ ಆನಂದದಿಂದ ದೇವರ ವಾಕ್ಯವನ್ನು ಅಂಗೀಕರಿಸಿದಿರಿ.</verse>
				<verse number="7">ಹೀಗೆ ಮಕೆದೋನಿಯ ಹಾಗೂ ಅಖಾಯ ಪ್ರಾಂತ್ಯದ ಕ್ರೈಸ್ತವಿಶ್ವಾಸಿಗಳಿಗೆ ನೀವು ಆದರ್ಶಪ್ರಾಯರಾದಿರಿ.</verse>
				<verse number="8">ಪ್ರಭುವಿನ ಶುಭಸಂದೇಶ ನಿಮ್ಮಿಂದಲೇ ಘೋಷಿತವಾಯಿತು. ದೇವರಲ್ಲಿ ನೀವಿಟ್ಟಿರುವ ವಿಶ್ವಾಸ ಮಕೆದೋನಿಯ ಮತ್ತು ಅಖಾಯದಲ್ಲಿ ಮಾತ್ರವಲ್ಲದೆ ಎಲ್ಲೆಡೆಯಲ್ಲೂ ಪ್ರಸರಿಸಿತು. ಈ ನಿಮ್ಮ ವಿಶ್ವಾಸವನ್ನು ಕುರಿತು ನಾವು ಹೇಳಬೇಕಾದುದು ಏನೂ ಇಲ್ಲ; ಅಲ್ಲಿಯ ಜನರೇ ಹೇಳುತ್ತಾರೆ.</verse>
				<verse number="9">ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ;</verse>
				<verse number="10">ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.</verse>
			</chapter>
			<chapter number="2">
				<verse number="1">ಸಹೋದರರೇ, ನಾವು ನಿಮ್ಮಲ್ಲಿಗೆ ಬಂದುದು ವ್ಯರ್ಥವಾಗಲಿಲ್ಲವೆಂಬುದು ನಿಮಗೆ ಗೊತ್ತು.</verse>
				<verse number="2">ನಿಮಗೆ ತಿಳಿದಿರುವಂತೆ ನಾವು ನಿಮ್ಮಲ್ಲಿಗೆ ಬರುವ ಮೊದಲೇ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆ, ಅವಮಾನಗಳನ್ನು ಸಹಿಸಿದೆವು. ತೀವ್ರವಾದ ವಿರೋಧವಿದ್ದರೂ ದೇವರ ನೆರವಿನಿಂದ ನಿರ್ಭೀತರಾಗಿ ಶುಭಸಂದೇಶವನ್ನು ನಿಮಗೆ ಸಾರಿದೆವು.</verse>
				<verse number="3">ನಮ್ಮ ಬೋಧನೆಯಾದರೋ ದುರುದ್ದೇಶದಿಂದ ಕೂಡಿದುದಲ್ಲ; ಅಶುದ್ಧ ಅಥವಾ ಕಪಟ ಮನಸ್ಸಿನಿಂದ ಮೂಡಿದುದೂ ಅಲ್ಲ.</verse>
				<verse number="4">ಶುಭಸಂದೇಶವನ್ನು ಸಾರಲು ನಾವು ಯೋಗ್ಯರೆಂದು ಎಣಿಸಿ, ದೇವರೇ ಈ ಹೊಣೆಯನ್ನು ನಮಗೆ ವಹಿಸಿಕೊಟ್ಟಿದ್ದಾರೆ. ಎಂತಲೇ, ನಾವು ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ಅಲ್ಲ, ಅಂತರಂಗವನ್ನು ಪರಿಶೋಧಿಸುವ ದೇವರನ್ನು ಮೆಚ್ಚಿಸುವುದಕ್ಕಾಗಿ ಈ ಕಾರ್ಯವನ್ನು ನಿರ್ವಹಿಸುತ್ತೇವೆ.</verse>
				<verse number="5">ನಿಮಗೆ ತಿಳಿದಿರುವ ಪ್ರಕಾರ ನಾವು ಎಂದಿಗೂ ಮುಖಸ್ತುತಿಗಾಗಿ ಮಾತನಾಡುವವರಲ್ಲ, ಧನದಾಶೆಯನ್ನು ಮರೆಮಾಚುವ ವೇಷಧಾರಿಗಳೂ ಅಲ್ಲ. ಇದಕ್ಕೆ ದೇವರೇ ಸಾಕ್ಷಿ.</verse>
				<verse number="6">ಕ್ರಿಸ್ತಯೇಸುವಿನ ಪ್ರೇಷಿತರಾದ ನಾವು ಜನರಿಂದ ಮರ್ಯಾದೆ, ಗೌರವಗಳನ್ನು ಗಳಿಸಬಹುದಾಗಿದ್ದರೂ ನಿಮ್ಮಿಂದಾಗಲಿ, ಇತರರಿಂದಾಗಲಿ ಅವನ್ನು ನಾವು ಬಯಸಲಿಲ್ಲ.</verse>
				<verse number="7">ತಾಯಿ ತನ್ನ ಮಕ್ಕಳನ್ನು ಸಾಕಿಸಲಹುವಂತೆಯೇ, ನಾವು ನಿಮ್ಮನ್ನು ವಾತ್ಸಲ್ಯದಿಂದ ಕಂಡೆವು.</verse>
				<verse number="8">ನೀವು ನಮಗೆ ಇಷ್ಟು ಪ್ರಿಯರಾದ ಕಾರಣ ದೇವರ ಶುಭಸಂದೇಶವನ್ನು ಸಾರುವುದಕ್ಕೆ ಮಾತ್ರವಲ್ಲ, ನಿಮಗಾಗಿ ನಮ್ಮ ಪ್ರಾಣವನ್ನು ನೀಡುವುದಕ್ಕೂ ಸಿದ್ಧರಾಗಿದ್ದೆವು.</verse>
				<verse number="9">ಸಹೋದರರೇ, ನಮ್ಮ ಶ್ರಮೆ ಹಾಗೂ ದುಡಿಮೆಗಳನ್ನು ನೀವು ಮರೆಯುವಂತಿಲ್ಲ. ನಿಮ್ಮಲ್ಲಿ ಯಾರಿಗೂ ನಾವು ಹೊರೆಯಾಗಬಾರದೆಂದು, ಬದುಕಿಗಾಗಿ ಹಗಲಿರುಳೂ ದುಡಿಯುತ್ತಾ ದೇವರ ಶುಭಸಂದೇಶವನ್ನು ಸಾರಿದೆವು.</verse>
				<verse number="10">ವಿಶ್ವಾಸಿಗಳಾದ ನಿಮ್ಮ ನಡುವೆ ನಾವು ಎಷ್ಟು ಶುದ್ಧರಾಗಿ, ನೀತಿವಂತರಾಗಿ, ನಿರ್ದೋಷಿಗಳಾಗಿ ನಡೆದುಕೊಂಡೆವು ಎಂಬುದಕ್ಕೆ ನೀವೇ ಸಾಕ್ಷಿಗಳು, ಮಾತ್ರವಲ್ಲದೆ ದೇವರೂ ಸಾಕ್ಷಿಯೇ.</verse>
				<verse number="11">ತಂದೆ ಮಕ್ಕಳನ್ನು ಕಾಣುವಂತೆ ನಾವು ಪ್ರತಿಯೊಬ್ಬನನ್ನೂ ಆದರದಿಂದ ಕಂಡೆವು; ಬುದ್ಧಿ ಹೇಳಿದೆವು; ಪ್ರೋತ್ಸಾಹಿಸಿದೆವು.</verse>
				<verse number="12">ತಮ್ಮ ರಾಜ್ಯ ಹಾಗೂ ವೈಭವದಲ್ಲಿ ಭಾಗವಹಿಸಲು ಕರೆಯಿತ್ತ ದೇವರು ಮೆಚ್ಚುವಂತೆ ಬಾಳಬೇಕೆಂದು ನಿಮಗೆ ವಿಧಿಸಿದೆವು; ಇದೆಲ್ಲಾ ನಿಮಗೆ ತಿಳಿದಿದೆ.</verse>
				<verse number="13">ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.</verse>
				<verse number="14">ಸಹೋದರರೇ, ನೀವು ಜುದೇಯದಲ್ಲಿರುವ ದೇವರ ಸಭೆಗಳನ್ನು ಅನುಸರಿಸಿದಿರಿ. ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಅವರು ಯೆಹೂದ್ಯರಿಂದ ಅನುಭವಿಸಿದಂಥ ಹಿಂಸೆಯನ್ನು, ನೀವೂ ಸ್ವಜನರಿಂದ ಅನುಭವಿಸಿದಿರಿ.</verse>
				<verse number="15">ಆ ಯೆಹೂದ್ಯರೇ ಪ್ರಭು ಯೇಸುವನ್ನೂ ಪ್ರವಾದಿಗಳನ್ನೂ ಸಂಹರಿಸಿದವರು; ನಮ್ಮನ್ನೂ ಸಹ ಹೊರದಬ್ಬಿದರು. ಅವರು ದೇವರಿಗೆ ದ್ರೋಹವೆಸಗಿದರು; ಜನರೆಲ್ಲರಿಗೆ ವಿರೋಧಿಗಳಾದರು.</verse>
				<verse number="16">ಯೆಹೂದ್ಯರಲ್ಲದ ಜನರಿಗೆ ಜೀವೋದ್ಧಾರವನ್ನು ತರುವ ಶುಭಸಂದೇಶವನ್ನು ನಾವು ಸಾರದಂತೆ ಅವರು ನಮ್ಮನ್ನು ತಡೆಗಟ್ಟುತ್ತಾರೆ. ಹೀಗೆ, ಅವರು ತಮ್ಮ ಪಾಪಕೃತ್ಯಗಳ ಪಟ್ಟಿಯನ್ನು ಸದಾ ಭರ್ತಿಮಾಡುತ್ತಾರೆ. ಕಡೆಗೆ, ದೇವರ ಕೋಪಾಗ್ನಿಯು ಅವರ ಮೇಲೆ ಬರುತ್ತದೆ.</verse>
				<verse number="17">ಸಹೋದರರೇ, ನಾವು ದೈಹಿಕವಾಗಿ ನಿಮ್ಮಿಂದ ಸ್ವಲ್ಪಕಾಲ ದೂರವಿದ್ದರೂ ಅಂತರಂಗದಲ್ಲಿ ನಿಮ್ಮೊಡನೆಯೇ ಇದ್ದೆವು; ನಿಮ್ಮನ್ನು ಮುಖಾಮುಖಿಯಾಗಿ ಕಾಣಲು ಪ್ರಯತ್ನಿಸಿದೆವು.</verse>
				<verse number="18">ನಿಮ್ಮಲ್ಲಿಗೆ ಹಿಂದಿರುಗಲು ನಮಗೆ ಮನಸ್ಸಿತ್ತು. ಪೌಲನೆಂಬ ನಾನಂತೂ, ನಿಮ್ಮ ಬಳಿಗೆ ಬರಲು ಅನೇಕ ಸಾರಿ ಪ್ರಯಾಸಪಟ್ಟೆ. ಆದರೆ ಸೈತಾನನು ನಮಗೆ ಅಡ್ಡಿ ಆತಂಕವನ್ನೊಡ್ಡಿದನು.</verse>
				<verse number="19">ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ಅವರ ಸಮ್ಮುಖದಲ್ಲಿ ನಮ್ಮ ಆಶಯ-ಆನಂದಗಳು, ಕೀರ್ತಿ-ಕಿರೀಟಗಳಾದರೂ ಯಾರು? ನೀವೇ ಅಲ್ಲವೇ?</verse>
				<verse number="20">ನಿಶ್ಚಯವಾಗಿ ನಮ್ಮ ಗೌರವವೂ ಆನಂದವೂ ನೀವೇ.</verse>
			</chapter>
			<chapter number="3">
				<verse number="1">ನಿಮ್ಮ ಅಗಲಿಕೆಯನ್ನು ಸಹಿಸಲಾಗದೆ ನಮ್ಮ ಸಹೋದರ ತಿಮೊಥೇಯನನ್ನು ನಿಮ್ಮ ಬಳಿಗೆ ಕಳುಹಿಸಿದೆವು. ನಾವು ಮಾತ್ರ ಅಥೆನ್ಸಿಯಲ್ಲಿ ಉಳಿಯುವುದೇ ಉಚಿತವೆಂದು ನಿರ್ಧರಿಸಿದೆವು.</verse>
				<verse number="2">ತಿಮೊಥೇಯನು ಯೇಸುಕ್ರಿಸ್ತರ ಶುಭಸಂದೇಶದ ಪ್ರಚಾರಕಾರ್ಯದಲ್ಲಿ ನಮ್ಮ ಸಹೋದರ ಹಾಗೂ ದೇವರ ದಾಸ; ನೀವು ವಿಶ್ವಾಸದಲ್ಲಿ ಅಚಲರಾಗಿ ನೆಲೆನಿಲ್ಲುವಂತೆ ಆತನು ನಿಮ್ಮನ್ನು ಉತ್ತೇಜಿಸುವನು.</verse>
				<verse number="3">ನಿಮಗೆ ಬಂದೊದಗಿರುವ ವಿಪತ್ತುಗಳಿಂದ ನೀವು ಯಾರೂ ಚಂಚಲರಾಗದಂತೆ ದೃಢಪಡಿಸುವನು. ಇಂಥ ವಿಪತ್ತುಗಳು ನಮ್ಮ ಪಾಲಿಗೆ ಕಟ್ಟಿಟ್ಟಬುತ್ತಿಯೆಂದು ನೀವು ಬಲ್ಲಿರಿ.</verse>
				<verse number="4">ನಾವು ನಿಮ್ಮೊಂದಿಗಿದ್ದಾಗ, ಇಂಥ ವಿಪತ್ತುಗಳು ಖಂಡಿತವಾಗಿ ತಲೆದೋರುವುವೆಂದು ನಿಮಗೆ ಮೊದಲೇ ತಿಳಿಸಿದ್ದೆವು. ಈಗ ಹಾಗೆಯೇ ಸಂಭವಿಸಿದೆ; ನಿಮ್ಮ ಅನುಭವಕ್ಕೂ ಬಂದಿದೆ.</verse>
				<verse number="5">ಆದುದರಿಂದ ನನಗೆ ಸಹಿಸಲು ಅಸಾಧ್ಯವಾಗಿ, ತಿಮೊಥೇಯನನ್ನು ನಿಮ್ಮ ಬಳಿಗೆ ಕಳುಹಿಸಬೇಕಾಯಿತು. ಏಕೆಂದರೆ, ನಿಮ್ಮ ವಿಶ್ವಾಸದ ಬಗ್ಗೆ ನನಗೆ ತಿಳಿಯಬೇಕಾಗಿತ್ತು; ಪ್ರಲೋಭಕನು ಒಡ್ಡುವ ಬಲೆಗೆ ನೀವು ಸಿಲುಕಿ ನಮ್ಮ ಶ್ರಮವೆಲ್ಲ ನಿಷ್ಪ್ರಯೋಜಕವಾಯಿತೋ ಏನೋ ಎಂಬ ದಿಗಿಲು ನನಗಿತ್ತು.</verse>
				<verse number="6">ನಿಮ್ಮನ್ನು ಸಂದರ್ಶಿಸಿದ ನಂತರ ತಿಮೊಥೇಯನು ಹಿಂದಿರುಗಿದ್ದಾನೆ. ನಿಮ್ಮ ವಿಶ್ವಾಸ ಮತ್ತು ಪ್ರೀತಿಯ ಬಗ್ಗೆ ಶುಭವರ್ತಮಾನವನ್ನು ತಂದಿದ್ದಾನೆ. ನಾವು ನಿಮ್ಮನ್ನು ಕಾಣಲು ಬಯಸುವಂತೆ, ನೀವೂ ನಮ್ಮನ್ನು ನೋಡಲು ಹಾತೊರೆಯುತ್ತಿರುವಿರೆಂದು ಮತ್ತು ನಮ್ಮನ್ನು ಪ್ರೀತಿಯಿಂದ ಸ್ಮರಿಸಿಕೊಳ್ಳುತ್ತಿರುವಿರೆಂದು ತಿಳಿಸಿದ್ದಾನೆ.</verse>
				<verse number="7">ಸಹೋದರರೇ, ನಾವು ಕಷ್ಟಸಂಕಟಗಳನ್ನು ಅನುಭವಿಸುತ್ತಿದ್ದರೂ ನಿಮ್ಮ ವಿಶ್ವಾಸವನ್ನು ಕುರಿತು ಕೇಳಿ ನಮಗೆ ಸಮಾಧಾನವಾಯಿತು.</verse>
				<verse number="8">ನೀವು ಪ್ರಭುವಿನಲ್ಲಿ ಅಚಲರಾಗಿರುವುದನ್ನು ಕೇಳಿ ಪುನಶ್ಚೇತನಗೊಂಡಿದ್ದೇವೆ.</verse>
				<verse number="9">ನಿಮ್ಮ ನಿಮಿತ್ತ ನಮಗೆ ಲಭಿಸಿರುವ ಆನಂದಕ್ಕಾಗಿ ದೇವರಿಗೆ ಎಷ್ಟು ಕೃತಜ್ಞತೆಯನ್ನು ಸಲ್ಲಿಸಿದರೂ ಸಾಲದು.</verse>
				<verse number="10">ನಿಮ್ಮನ್ನು ಕಣ್ಣಾರೆ ಕಂಡು ನಿಮ್ಮ ವಿಶ್ವಾಸದಲ್ಲಿರುವ ಕುಂದುಕೊರತೆಗಳನ್ನು ನಿವಾರಿಸಬೇಕೆಂದು ನಾವು ದೇವರಲ್ಲಿ ಹಗಲಿರುಳು ಪ್ರಾರ್ಥಿಸುತ್ತಿದ್ದೇವೆ.</verse>
				<verse number="11">ಪಿತನಾದ ದೇವರೂ ಪ್ರಭುವಾದ ಯೇಸುವೂ ನಾವು ನಿಮ್ಮಲ್ಲಿಗೆ ಬರುವಂತೆ ನಮ್ಮ ಮಾರ್ಗವನ್ನು ಸುಗಮಗೊಳಿಸಲಿ.</verse>
				<verse number="12">ನಿಮ್ಮ ಮೇಲೆ ನಮಗಿರುವ ಪ್ರೀತಿ ವೃದ್ಧಿಯಾಗುತ್ತಿರುವಂತೆಯೇ, ನಿಮ್ಮ ಪರಸ್ಪರ ಪ್ರೀತಿಯೂ ಸರ್ವಜನಪ್ರೇಮವೂ ಬೆಳೆದು ಸಮೃದ್ಧಿಯಾಗಲೆಂದು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇವೆ.</verse>
				<verse number="13">ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ; ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವೂ ಸಹ ಪರಿಶುದ್ಧರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ.</verse>
			</chapter>
			<chapter number="4">
				<verse number="1">ಕಡೆಯದಾಗಿ ಸಹೋದರರೇ, ನೀವು ಹೇಗೆ ಬಾಳಬೇಕು. ದೇವರು ಮೆಚ್ಚುವಂತೆ ಹೇಗೆ ನಡೆದುಕೊಳ್ಳಬೇಕು, ಎಂಬುದನ್ನು ನಮ್ಮಿಂದ ಕಲಿತುಕೊಂಡಿರಿ. ಅಂತೆಯೇ ಜೀವಿಸುತ್ತಿದ್ದೀರಿ. ನಿಮ್ಮ ನಡತೆ ಇನ್ನೂ ಉತ್ತಮಗೊಳ್ಳಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.</verse>
				<verse number="2">ಪ್ರಭು ಯೇಸುವಿನ ಅಧಿಕಾರದಿಂದ ನಾವು ನಿಮಗೆ ವಿಧಿಸಿದ ನಿಯಮಗಳನ್ನು ನೀವು ಬಲ್ಲಿರಿ.</verse>
				<verse number="3">ನೀವು ಕೆಟ್ಟ ನಡತೆಯನ್ನು ಬಿಟ್ಟು ಪರಿಶುದ್ಧರಾಗಿ ಜೀವಿಸಬೇಕು ಎಂಬುದು ದೇವರ ಚಿತ್ತ.</verse>
				<verse number="4">ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಪತ್ನಿಯನ್ನು ಘನತೆ ಗೌರವದಿಂದಲೂ ಶುದ್ಧಮನಸ್ಸಿನಿಂದಲೂ ನಡೆಸಿಕೊಳ್ಳಬೇಕು.</verse>
				<verse number="5">ದೇವರ ಅರಿವೇ ಇಲ್ಲದ ಅನ್ಯಜನರಂತೆ ಕಾಮಾತಿರೇಕದಿಂದ ವರ್ತಿಸಬಾರದು.</verse>
				<verse number="6">ಈ ವಿಷಯದಲ್ಲಿ ಯಾರೂ ತನ್ನ ಸಹೋದರನನ್ನು ವಂಚಿಸಿ ಅತಿಕ್ರಮಿಸದಿರಲಿ. ಹೀಗೆ ವರ್ತಿಸುವವರು ಪ್ರಭುವಿನ ಪ್ರತೀಕಾರಕ್ಕೆ ಒಳಗಾಗುವರೆಂದು ನಾವು ನಿಮಗೆ ಮುನ್ನೆಚ್ಚರಿಕೆ ಕೊಟ್ಟಿದ್ದೇವೆ.</verse>
				<verse number="7">ದೇವರು ನಮ್ಮನ್ನು ಕರೆದಿರುವುದು ಅಶುದ್ಧ ನಡತೆಗಲ್ಲ, ಪರಿಶುದ್ಧ ನಡತೆಗೆ.</verse>
				<verse number="8">ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.</verse>
				<verse number="9">ಸಹೋದರ ಪ್ರೇಮವನ್ನು ಕುರಿತು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ನೀವು ಒಬ್ಬರನ್ನೊಬ್ಬರು ಪ್ರೀತಿಸುವುದನ್ನು ದೇವರಿಂದಲೇ ಕಲಿತಿದ್ದೀರಿ.</verse>
				<verse number="10">ಮಕೆದೋನಿಯದಲ್ಲಿ ವಾಸಿಸುವ ಎಲ್ಲ ಸಹೋದರರನ್ನೂ ನೀವು ಪ್ರೀತಿಸುತ್ತಿರುವುದೇನೋ ನಿಜ. ಆದರೂ ಸಹೋದರರೇ, ನಿಮ್ಮ ಈ ಪ್ರೀತಿ ಇನ್ನೂ ಅಧಿಕಾಧಿಕವಾಗಬೇಕೆಂಬುದೇ ನಮ್ಮ ಆಶಯ.</verse>
				<verse number="11">ಮತ್ತೊಬ್ಬರ ವಿಷಯದಲ್ಲಿ ನೀವು ತಲೆಹಾಕದೆ ನಿಮ್ಮ ಸ್ವಂತಕಾರ್ಯಗಳಲ್ಲೇ ಮಗ್ನರಾಗಿರಿ. ನೆಮ್ಮದಿಯ ಜೀವನವೇ ನಿಮ್ಮ ಗುರಿಯಾಗಿರಲಿ. ನಿಮ್ಮ ಸ್ವಂತ ದುಡಿಮೆಯಿಂದ ಬದುಕನ್ನು ಸಾಗಿಸಿರಿ. ಇದೇ ನಿಮಗೆ ನಮ್ಮ ಆದೇಶ.</verse>
				<verse number="12">ಹೀಗೆ ಬಾಳಿದರೆ ಅನ್ಯಜನರು ನಿಮ್ಮನ್ನು ಗೌರವಿಸುವರು; ಇತರರನ್ನು ಅವಲಂಬಿಸುವ ಅವಶ್ಯಕತೆ ನಿಮಗಿರುವುದಿಲ್ಲ.</verse>
				<verse number="13">ಸಹೋದರರೇ, ಮೃತರ ಮುಂದಿನ ಸ್ಥಿತಿಗತಿಯ ವಿಷಯವಾಗಿ ನೀವು ತಿಳಿದಿರಬೇಕು ಎಂಬುದೇ ನಮ್ಮ ಬಯಕೆ. ಏಕೆಂದರೆ, ನಂಬಿಕೆ ನಿರೀಕ್ಷೆಯಿಲ್ಲದ ಇತರರಂತೆ ಮೃತರಿಗಾಗಿ ನೀವು ದುಃಖಿಸಬಾರದು.</verse>
				<verse number="14">ಯೇಸು ಸತ್ತು ಪುನರುತ್ಥಾನ ಹೊಂದಿದರೆಂದು ನಾವು ವಿಶ್ವಾಸಿಸುತ್ತೇವೆ ಅಲ್ಲವೇ? ಹಾಗೆಯೇ, ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟು ಮರಣಹೊಂದಿದವರನ್ನು ದೇವರು ಯೇಸುಕ್ರಿಸ್ತರೊಡನೆ ಮರಳಿ ಕರೆದುಕೊಳ್ಳುತ್ತಾರೆ.</verse>
				<verse number="15">ಪ್ರಭುವಿನ ವಾಕ್ಯದ ಆಧಾರದ ಮೇಲೆ ನಾವು ನಿಮಗೆ ಹೇಳುತ್ತೇವೆ: ಪ್ರಭು ಪುನರಾಗಮಿಸುವಾಗ, ಇನ್ನೂ ಬದುಕಿರುವ ನಾವು ಮೃತರಾಗಿರುವ ಇತರರಿಗಿಂತಲೂ ಮುಂದಿನವರಾಗುವುದಿಲ್ಲ.</verse>
				<verse number="16">ಆಜ್ಞಾಘೋಷವಾದಾಗ, ಪ್ರಧಾನ ದೂತನ ಧ್ವನಿಯು ಕೇಳಿಬಂದಾಗ, ದೇವರ ತುತೂರಿ ನಾದಗೈದಾಗ, ಪ್ರಭುವೇ ಸ್ವರ್ಗದಿಂದ ಇಳಿದುಬರುತ್ತಾರೆ. ಆಗ, ಕ್ರಿಸ್ತಸ್ಥರಾಗಿ ಮೃತರಾದವರು ಮೊದಲು ಎದ್ದುಬರುತ್ತಾರೆ.</verse>
				<verse number="17">ಆಮೇಲೆ, ಇನ್ನೂ ಬದುಕಿರುವ ನಾವು ಎದ್ದುಬಂದವರೊಡನೆ ಆಕಾಶಮಂಡಲದಲ್ಲಿ ಪ್ರಭುವನ್ನು ಎದುರುಗೊಳ್ಳಲು ಮೇಘಾರೂಢರಾಗಿ ಮೇಲಕ್ಕೆ ಒಯ್ಯಲ್ಪಡುತ್ತೇವೆ. ಹೀಗೆ ಸರ್ವದಾ ನಾವು ಪ್ರಭುವಿನೊಂದಿಗೆ ಇರುತ್ತೇವೆ.</verse>
				<verse number="18">ಆದ್ದರಿಂದ, ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿಕೊಳ್ಳಿ.</verse>
			</chapter>
			<chapter number="5">
				<verse number="1">ಸಹೋದರರೇ, ಇದೆಲ್ಲ ನಡೆಯಲಿರುವ ಸಮಯ ಸಂದರ್ಭಗಳನ್ನು ಕುರಿತು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.</verse>
				<verse number="2">ರಾತ್ರಿಯಲ್ಲಿ ಕಳ್ಳನು ಬರುವ ಹಾಗೆ ಪ್ರಭುವಿನ ದಿನವು ಬರುವುದೆಂದು ನೀವು ಚೆನ್ನಾಗಿ ಬಲ್ಲಿರಿ.</verse>
				<verse number="3">ಎಲ್ಲವೂ ಶಾಂತ, ಸುಭದ್ರವೆಂದು ಜನರು ಎಣಿಸುತ್ತಿರುವಾಗಲೇ, ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ, ವಿನಾಶವು ಫಕ್ಕನೆ ಅವರ ಮೇಲೆ ಬಂದೆರಗುವುದು. ಇದರಿಂದ ಯಾರೂ ತಪ್ಪಿಸಿಕೊಳ್ಳುವಂತಿಲ್ಲ.</verse>
				<verse number="4">ಸಹೋದರರೇ, ಕಳ್ಳನಂತೆ ಆ ದಿನವು ನಿಮ್ಮನ್ನು ದಿಗ್ಭ್ರಮೆಗೊಳಿಸದಿರಲಿ. ಏಕೆಂದರೆ, ನೀವಿನ್ನು ಅಂಧಕಾರಕ್ಕೆ ಸೇರಿದವರಲ್ಲ. ಆ ದಿನವು ದಿಢೀರನೆ ನಿಮ್ಮ ಮೇಲೆ ಬರಬಾರದು.</verse>
				<verse number="5">ನೀವೆಲ್ಲರೂ ಬೆಳಕಿನ ಹಾಗೂ ಹಗಲಿನ ಮಕ್ಕಳು. ನಾವು ಕತ್ತಲೆಗಾಗಲಿ, ರಾತ್ರಿಗಾಗಲಿ ಸೇರಿದವರಲ್ಲ.</verse>
				<verse number="6">ಅಂದ ಮೇಲೆ, ಇತರರಂತೆ ನಾವು ನಿದ್ದೆಮಾಡದೆ ಎಚ್ಚರವಾಗಿದ್ದು ಸ್ವಸ್ಥಚಿತ್ತರಾಗಿ ವರ್ತಿಸೋಣ.</verse>
				<verse number="7">ನಿದ್ರೆಯೂ ಕುಡುಕತನವೂ ರಾತ್ರಿಗೆ ಸಂಬಂಧಿಸಿದವುಗಳು.</verse>
				<verse number="8">ನಾವು ಹಗಲಿಗೆ ಸೇರಿದವರಾದುದರಿಂದ ಸ್ವಸ್ಥಚಿತ್ತದಿಂದ ಇರೋಣ. ವಿಶ್ವಾಸ ಹಾಗೂ ಪ್ರೀತಿ ನಮಗೆ ವಕ್ಷಕವಚವಾಗಬೇಕು. ಜೀವೋದ್ಧಾರದ ನಿರೀಕ್ಷೆ ನಮಗೆ ಶಿರಸ್ತ್ರಾಣವಾಗಿರಬೇಕು.</verse>
				<verse number="9">ಕೋಪಾಗ್ನಿಗೆ ನಾವು ಗುರಿಯಾಗಬೇಕೆಂದಲ್ಲ, ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ನಾವು ಜೀವೋದ್ಧಾರ ಹೊಂದಬೇಕೆಂಬುದೇ ದೈವೇಚ್ಛೆ.</verse>
				<verse number="10">ಯೇಸುಕ್ರಿಸ್ತರು ಮರಳಿ ಬರುವಾಗ, ನಾವು ಮೃತರಾಗಿದ್ದರೂ ಜೀವಂತವಾಗಿದ್ದರೂ ಅವರೊಡನೆಯೇ ನಾವು ಜೀವಿಸಬೇಕೆಂದೆ ನಮಗಾಗಿ ಅವರು ಸಾವನ್ನಪ್ಪಿದರು.</verse>
				<verse number="11">ಆದುದರಿಂದ ನೀವು ಈಗ ನಡೆದುಕೊಳ್ಳುತ್ತಿರುವಂತೆ, ಒಬ್ಬರನ್ನೊಬ್ಬರು ಪ್ರೋತ್ಸಾಹಿಸಿ, ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಗೊಳಿಸಿರಿ.</verse>
				<verse number="12">ಸಹೋದರರೇ, ನಿಮ್ಮೊಡನೆ ದುಡಿಯುತ್ತಾ ಪ್ರಭುವಿನ ಹೆಸರಿನಲ್ಲಿ ನಿಮಗೆ ಅಧಿಕಾರಿಗಳೂ ಮಾರ್ಗದರ್ಶಕರೂ ಆಗಿರುವವರಿಗೆ ತಕ್ಕ ಸನ್ಮಾನವನ್ನು ಸಲ್ಲಿಸಿರಿ.</verse>
				<verse number="13">ಅವರು ನಿರ್ವಹಿಸುವ ಕಾರ್ಯದ ನಿಮಿತ್ತ ಅವರನ್ನು ಅತ್ಯಧಿಕ ಪ್ರೀತಿಯಿಂದ ಗೌರವಿಸಿರಿ. ನಿಮ್ಮನಿಮ್ಮೊಳಗೆ ಸಮಾಧಾನದಿಂದಿರಿ.</verse>
				<verse number="14">ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ; ಮನಗುಂದಿದವರಿಗೆ ಧೈರ್ಯ ತುಂಬಿರಿ; ದುರ್ಬಲರಿಗೆ ನೆರವಾಗಿರಿ; ಎಲ್ಲರೊಡನೆ ಸಹನೆಯಿಂದಿರಿ. ಇದು ನಮ್ಮ ಪ್ರಬೋಧನೆ.</verse>
				<verse number="15">ಕೆಡುಕಿಗೆ ಪ್ರತಿಯಾಗಿ ಕೆಡುಕು ಮಾಡದೆ ಎಚ್ಚರದಿಂದಿರಿ. ಯಾವಾಗಲೂ ಒಬ್ಬರಿಗೊಬ್ಬರು ಮಾತ್ರವಲ್ಲದೆ ಎಲ್ಲರಿಗೂ ಹಿತವನ್ನೇ ಮಾಡಿರಿ.</verse>
				<verse number="16">ಸದಾ ಹರ್ಷಚಿತ್ತರಾಗಿರಿ.</verse>
				<verse number="17">ಎಡೆಬಿಡದೆ ಪ್ರಾರ್ಥಿಸಿರಿ.</verse>
				<verse number="18">ಎಲ್ಲಾ ಸಂದರ್ಭಗಳಲ್ಲೂ ಉಪಕಾರಸ್ಮರಣೆಮಾಡಿರಿ. ಕ್ರಿಸ್ತಯೇಸುವಿನಲ್ಲಿ ದೇವರು ನಿಮ್ಮಿಂದ ಇಚ್ಛಿಸುವುದು ಇದನ್ನೇ.</verse>
				<verse number="19">ಪವಿತ್ರಾತ್ಮರನ್ನು ನಿಶ್ಚೇತನಗೊಳಿಸಬೇಡಿ.</verse>
				<verse number="20">ಪ್ರವಾದನೆಗಳನ್ನು ಅಲ್ಲಗಳೆಯದಿರಿ.</verse>
				<verse number="21">ಅವುಗಳನ್ನೆಲ್ಲಾ ಪರಿಶೋಧಿಸಿ ಒಳ್ಳೆಯದನ್ನು ಅಂಗೀಕರಿಸಿ,</verse>
				<verse number="22">ಕೆಟ್ಟದ್ದನ್ನೆಲ್ಲಾ ಬಿಟ್ಟುಬಿಡಿ.</verse>
				<verse number="23">ಶಾಂತಿದಾಯಕ ದೇವರು ನಿಮ್ಮನ್ನು ಪೂರ್ಣವಾಗಿ ಪಾವನಗೊಳಿಸಲಿ. ನಮ್ಮ ಪ್ರಭು ಯೇಸು ಪುನರಾಗಮಿಸುವಾಗ ನಿಮ್ಮ ಆತ್ಮ, ಪ್ರಾಣ, ದೇಹ - ಇವುಗಳು ದೋಷರಹಿತವಾಗಿಯೂ ಸ್ವಸ್ಥವಾಗಿಯೂ ಇರುವಂತೆ ನಿಮ್ಮನ್ನು ಕಾಪಾಡಲಿ.</verse>
				<verse number="24">ನಿಮ್ಮನ್ನು ಕರೆದ ದೇವರು ಇದನ್ನು ಈಡೇರಿಸುವರು; ಏಕೆಂದರೆ, ದೇವರು ನಂಬಿಕಸ್ಥರು.</verse>
				<verse number="25">ಸಹೋದರರೇ, ನಮಗಾಗಿಯೂ ಪ್ರಾರ್ಥಿಸಿರಿ.</verse>
				<verse number="26">ಪವಿತ್ರವಾದ ಮುದ್ದಿಟ್ಟು ಸಹೋದರರೆಲ್ಲರನ್ನು ವಂದಿಸಿರಿ.</verse>
				<verse number="27">ಈ ಪತ್ರವನ್ನು ಎಲ್ಲ ಸಹೋದರರಿಗೂ ಓದಿಹೇಳಬೇಕೆಂದು ಪ್ರಭುವಿನ ಹೆಸರಿನಲ್ಲಿ ವಿಧಿಸುತ್ತಿದ್ದೇನೆ.</verse>
				<verse number="28">ನಮ್ಮ ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹ ನಿಮ್ಮಲ್ಲಿರಲಿ!</verse>
			</chapter>
		</book>
		<book number="53">
			<chapter number="1">
				<verse number="1">ನಮ್ಮ ಪಿತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸಲೋನಿಕದ ಸಭೆಯವರಿಗೆ - ಪೌಲ, ಸಿಲ್ವಾನ ಹಾಗು ತಿಮೊಥೇಯರು ಬರೆಯುವ ಪತ್ರ.</verse>
				<verse number="2">ತಂದೆಯಾದ ದೇವರ ಮತ್ತು ಪ್ರಭುವಾದ ಯೇಸುಕ್ರಿಸ್ತರ ಅನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!</verse>
				<verse number="3">ಸಹೋದರರೇ, ನಿಮಗಾಗಿ ನಾವು ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ; ಹಾಗೆ ಸಲ್ಲಿಸುವುದು ಯುಕ್ತವೂ ಹೌದು. ಏಕೆಂದರೆ, ನಿಮ್ಮ ವಿಶ್ವಾಸವು ಪ್ರವರ್ಧಿಸುತ್ತಾ ಇದೆ. ನಿಮ್ಮಲ್ಲಿರುವ ಪರಸ್ಪರ ಪ್ರೀತಿ ಹೆಚ್ಚುತ್ತಿದೆ.</verse>
				<verse number="4">ಯಾವಾಗಲೂ ಸಹನೆಯಿಂದಲೂ ಸ್ಥಿರ ವಿಶ್ವಾಸದಿಂದಲೂ ನಿಮಗೆ ಬಂದೊದಗಿರುವ ಕಷ್ಟಸಂಕಟಗಳನ್ನೂ ಚಿತ್ರಹಿಂಸೆಗಳನ್ನೂ ಅನುಭವಿಸುತ್ತಿದ್ದೀರಿ. ಅದಕ್ಕಾಗಿ ದೇವರ ಸಭೆಗಳಲ್ಲಿ ನಿಮ್ಮನ್ನು ಕುರಿತು ನಾವು ಹೆಮ್ಮೆಯಿಂದ ಮಾತನಾಡುತ್ತೇವೆ.</verse>
				<verse number="5">ನೀವು ಅನುಭವಿಸುತ್ತಿರುವುದೆಲ್ಲ ದೇವರ ಸಾಮ್ರಾಜ್ಯಕ್ಕಾಗಿ. ಈ ಕಷ್ಟಾನುಭವಗಳ ಮೂಲಕ ದೇವರು ನಿಮ್ಮನ್ನು ತಮ್ಮ ಸಾಮ್ರಾಜ್ಯಕ್ಕೆ ಅರ್ಹರನ್ನಾಗಿ ಮಾಡುತ್ತಾರೆ. ಇವುಗಳಲ್ಲಿ ನೀವು ತೋರಿಸುವ ಸಹನೆ ಹಾಗೂ ವಿಶ್ವಾಸ ಇವುಗಳೇ ದೇವರು ನ್ಯಾಯವಾದ ತೀರ್ಪು ಮಾಡುತ್ತಾರೆಂಬುದಕ್ಕೆ ಸ್ಪಷ್ಟ ನಿದರ್ಶನಗಳು.</verse>
				<verse number="6">ನ್ಯಾಯವಾದುದ್ದನ್ನೇ ಮಾಡುವ ದೇವರು ನಿಮ್ಮನ್ನು ಹಿಂಸಿಸುವವರಿಗೆ ಪ್ರತಿಹಿಂಸೆಯನ್ನೂ ಮತ್ತು ಹಿಂಸೆಯನ್ನು ಸಹಿಸುತ್ತಿರುವ ನಿಮಗೆ, ನಮ್ಮೊಡನೆ ಉಪಶಮನವನ್ನೂ ದಯಪಾಲಿಸುವರು.</verse>
				<verse number="7">ಪ್ರಭು ಯೇಸು ತಮ್ಮ ಪ್ರಭಾವಯುತ ದೂತರೊಂದಿಗೆ ಸ್ವರ್ಗದಿಂದ ಪ್ರತ್ಯಕ್ಷರಾಗುವಾಗ, ಬೆಂಕಿಯ ಜ್ವಾಲೆಗಳು ಕಂಡುಬರುವುವು; ದೇವರನ್ನು ಅರಿತು ಅಲ್ಲಗಳೆದವರಿಗೂ ನಮ್ಮ ಪ್ರಭು ಯೇಸುವಿನ ಶುಭಸಂದೇಶಕ್ಕೆ ಅವಿಧೇಯರಾಗಿ ವರ್ತಿಸಿದವರಿಗೂ ತಕ್ಕ ಪ್ರತೀಕಾರವಾಗುವುದು.</verse>
				<verse number="8"></verse>
				<verse number="9">ಇವರು ಪ್ರಭುವಿನ ಸನ್ನಿಧಿಯಿಂದಲೂ ಅವರ ಪ್ರಭಾವದ ಮಹಿಮೆಯಿಂದಲೂ ಬಹಿಷ್ಕೃತರಾಗಿ, ನಿತ್ಯದಂಡನೆಗೆ ಗುರಿಯಾಗುವರು.</verse>
				<verse number="10">ಪ್ರಭು ತಮ್ಮ ಸದ್ಭಕ್ತರೆಲ್ಲರಿಂದ ಸನ್ಮಾನವನ್ನೂ ವಿಶ್ವಾಸಿಗಳೆಲ್ಲರಿಂದ ಗೌರವವನ್ನೂ ಪಡೆಯುವ ಆ ದಿನದಲ್ಲಿ ಇದೆಲ್ಲಾ ಸಂಭವಿಸುವುದು. ನಾವು ನಿಮಗಿತ್ತ ಸಾಕ್ಷಿಯನ್ನು ನಂಬಿದ ನೀವೆಲ್ಲರೂ ಅವರೊಂದಿಗಿರುವಿರಿ.</verse>
				<verse number="11">ಇದಕ್ಕಾಗಿ ನಿಮಗೋಸ್ಕರ ನಾವು ಸದಾ ಪ್ರಾರ್ಥಿಸುತ್ತೇವೆ. ದೇವರೇ ನೀಡಿರುವ ಕರೆಗೆ ನೀವು ಯೋಗ್ಯರಾಗಿ ಬಾಳುವಂತಾಗಲಿ; ದೇವರ ಮಹಿಮಾಶಕ್ತಿಯಿಂದ ನಿಮ್ಮ ಶುಭಾಕಾಂಕ್ಷೆಗಳು ಮತ್ತು ವಿಶ್ವಾಸಪ್ರೇರಿತ ಕಾರ್ಯಗಳು ಪೂರ್ಣವಾಗಲಿ.</verse>
				<verse number="12">ಹೀಗೆ ನಿಮ್ಮ ಮುಖಾಂತರ ಪ್ರಭು ಯೇಸುವಿನ ನಾಮಕ್ಕೂ ಮತ್ತು ಅವರಲ್ಲಿ ನಿಮಗೂ ಮಹಿಮೆಯುಂಟಾಗಲಿ. ನಮ್ಮ ದೇವರ ಹಾಗು ಪ್ರಭು ಯೇಸುಕ್ರಿಸ್ತರ ಅನುಗ್ರಹದಿಂದ ಇದು ನೆರವೇರಲಿ.</verse>
			</chapter>
			<chapter number="2">
				<verse number="1">ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಪುನರಾಗಮನವನ್ನು ಮತ್ತು ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನು ಕುರಿತು ನಿಮ್ಮಲ್ಲಿ ನಾವು ವಿನಂತಿಸುವುದೇನೆಂದರೆ:</verse>
				<verse number="2">ಪ್ರಭುವಿನ ದಿನವು ಬಂದೇಬಿಟ್ಟಿತೆಂದು ಪ್ರವಾದನೆಯಿಂದಾಗಲಿ, ಪ್ರವಚನದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದುಬಂದಿದೆಯೆಂದು ಯಾರಾದರೂ ಹೇಳಿದರೆ, ಒಮ್ಮೆಗೇ ನೀವು ತಬ್ಬಿಬ್ಬಾಗಿ, ತಳಮಳಗೊಳ್ಳದಿರಿ.</verse>
				<verse number="3">ನಿಮ್ಮನ್ನು ಯಾರೂ ಯಾವ ರೀತಿಯಲ್ಲೂ ವಂಚಿಸದಿರಲಿ. ಆ ದಿನವು ಬರುವುದಕ್ಕೆ ಮುಂಚೆ ದೇವರಿಗೆ ವಿರುದ್ಧವಾದ ‘ಅಂತಿಮ ಪ್ರತಿಭಟನೆ’ ಉಂಟಾಗುವುದು. ‘ಪಾಪಪುರುಷನಾದ’ ಅಧರ್ಮಿ ತಲೆ ಎತ್ತಿಕೊಳ್ಳುವನು.</verse>
				<verse number="4">ದೇವರೆನಿಸಿಕೊಳ್ಳುವ ಎಲ್ಲವನ್ನೂ ಅಲ್ಲಗಳೆಯುವನು; ಆರಾಧನೆಗೈಯುವ ಎಲ್ಲವನ್ನೂ ಇಲ್ಲಗೊಳಿಸುವನು; ಇವೆಲ್ಲಕ್ಕೂ ತಾವೇ ಮಿಗಿಲೆಂದು ಭಾವಿಸಿ ದೇವಮಂದಿರದಲ್ಲಿ ಕುಳಿತುಕೊಂಡು ತಾನೇ ದೇವರೆಂದು ಘೋಷಿಸಿಕೊಳ್ಳುವನು.</verse>
				<verse number="5">ನಾನು ನಿಮ್ಮೊಡನೆ ಇದ್ದಾಗಲೇ ಇದೆಲ್ಲವನ್ನು ತಿಳಿಸಿದ ನೆನಪು ನಿಮಗಿಲ್ಲವೇ?</verse>
				<verse number="6">ನಿಯಮಿತ ಕಾಲಕ್ಕೆ ಮುಂಚೆ ಕಾಣಿಸಿಕೊಳ್ಳದಂತೆ ಅವನನ್ನು ತಡೆಹಿಡಿದಿರುವುದು ಯಾವುದೆಂದು ನೀವು ಬಲ್ಲಿರಿ.</verse>
				<verse number="7">ಅಧರ್ಮವು ಈಗಾಗಲೇ ಗುಪ್ತವಾಗಿ ತನ್ನ ಕೆಲಸವನ್ನು ಸಾಧಿಸುತ್ತಿದೆ; ತಡೆಗಟ್ಟಿರುವವನು ದಾರಿಬಿಡುವ ತನಕ ಅದು ಗುಪ್ತವಾಗಿಯೇ ಇರುವುದು.</verse>
				<verse number="8">ಆಮೇಲೆ ಆ ಅಧರ್ಮಿ ಕಾಣಿಸಿಕೊಳ್ಳುವನು. ಅವನನ್ನು ಪ್ರಭು ಯೇಸು ತಮ್ಮ ಬಾಯುಸಿರಿನಿಂದಲೇ ಕೊಂದುಹಾಕುವರು; ತಮ್ಮ ಪ್ರತ್ಯಕ್ಷತೆಯ ತೇಜಸ್ಸಿನಿಂದಲೇ ತರಿದುಬಿಡುವರು.</verse>
				<verse number="9">ಆ ಅಧರ್ಮಿ ಸೈತಾನನ ಶಕ್ತಿಯೊಂದಿಗೆ ಬರುವನು. ಮೋಸಗೊಳಿಸುವ ಎಲ್ಲಾ ಬಗೆಯ ಪವಾಡಗಳನ್ನು, ಚಮತ್ಕಾರಗಳನ್ನು ಮತ್ತು ಶಕ್ತಿಯುತ ಕಾರ್ಯಗಳನ್ನು ಮಾಡಿತೋರಿಸುವನು.</verse>
				<verse number="10">ಸತ್ಯವನ್ನು ಪ್ರೀತಿಸದೆ, ಜೀವೋದ್ಧಾರವನ್ನು ನಿರಾಕರಿಸಿ, ವಿನಾಶದ ಮಾರ್ಗದಲ್ಲಿರುವವರನ್ನು ಎಲ್ಲಾ ತರಹದ ಕುಯುಕ್ತಿಯಿಂದ ಅವನು ವಂಚಿಸುವನು.</verse>
				<verse number="11">ಆದಕಾರಣ, ಅಸತ್ಯವನ್ನು ನಂಬುವಂಥ ಗಾಢಭ್ರಮೆಗೆ ದೇವರು ಅವರನ್ನು ಒಳಪಡಿಸುವರು.</verse>
				<verse number="12">ಹೀಗೆ ಸತ್ಯವನ್ನು ವಿಶ್ವಾಸಿಸದೆ, ಅಧರ್ಮದಲ್ಲಿ ಆನಂದಿಸುವವರೆಲ್ಲರೂ ಖಂಡನೆಗೆ ಗುರಿಯಾಗುವರು.</verse>
				<verse number="13">ಸಹೋದರರೇ, ಪ್ರಭುವಿಗೆ ಪ್ರಿಯರಾದವರೇ, ನಿಮಗಾಗಿ ನಿರಂತರವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ನಾವು ಬದ್ಧರು. ಏಕೆಂದರೆ, ದೇವರು ನಿಮ್ಮನ್ನು ಪವಿತ್ರಾತ್ಮರ ಮುಖಾಂತರ ಪಾವನಗೊಳಿಸಿ, ನೀವು ಸತ್ಯದಲ್ಲಿ ವಿಶ್ವಾಸವಿಡುವಂತೆ ಮಾಡಿ, ಜೀವೋದ್ಧಾರವನ್ನು ಪಡೆಯುವಂತೆ ನಿಮ್ಮನ್ನು ಪ್ರಥಮ ಫಲವನ್ನಾಗಿ ಆರಿಸಿಕೊಂಡಿದ್ದಾರೆ.</verse>
				<verse number="14">ಹೀಗೆ ಉದ್ಧಾರಹೊಂದಿ ನಮ್ಮ ಪ್ರಭು ಯೇಸುಕ್ರಿಸ್ತರ ಮಹಿಮೆಯಲ್ಲಿ ನೀವು ಸಹ ಪಾಲುಗೊಳ್ಳುವಂತೆ, ನಾವು ಸಾರಿದ ಶುಭಸಂದೇಶದ ಮೂಲಕ ದೇವರು ನಿಮ್ಮನ್ನು ಕರೆದಿದ್ದಾರೆ.</verse>
				<verse number="15">ಆದ್ದರಿಂದ ಸಹೋದರರೇ, ನಾವು ನಿಮಗೆ ಬಾಯಿಮಾತಿನಿಂದಾಗಲಿ, ಪತ್ರದ ಮೂಲವಾಗಲಿ ಬೋಧಿಸಿರುವ ಸತ್‍ಸಂಪ್ರದಾಯಗಳನ್ನು ಪ್ರಾಮಾಣಿಕವಾಗಿ ಪಾಲಿಸುತ್ತಾ ಸ್ಥಿರವಾಗಿ ನಿಲ್ಲಿರಿ</verse>
				<verse number="16">ನಮ್ಮನ್ನು ಪ್ರೀತಿಸಿ ನಿತ್ಯಾದರಣೆಯನ್ನೂ ಉತ್ತಮ ನಿರೀಕ್ಷೆಯನ್ನೂ ಅನುಗ್ರಹವಾಗಿ ಕೊಟ್ಟಿರುವ ನಮ್ಮ ಪ್ರಭುವಾದ ಯೇಸುಕ್ರಿಸ್ತರು ಹಾಗೂ ಪಿತನಾದ ದೇವರು ನಿಮ್ಮ ಹೃನ್ಮನಗಳನ್ನು ಉತ್ತೇಜನಗೊಳಿಸಲಿ.</verse>
				<verse number="17">ಸಕಲ ಸತ್ಕಾರ್ಯಗಳಲ್ಲೂ ಸನ್ನುಡಿಯಲ್ಲೂ ನಿಮ್ಮನ್ನು ದೃಢಪಡಿಸಲಿ.</verse>
			</chapter>
			<chapter number="3">
				<verse number="1">ಕೊನೆಯದಾಗಿ ಸಹೋದರರೇ, ನಮಗಾಗಿಯೂ ಪ್ರಾರ್ಥನೆಮಾಡಿ; ಪ್ರಭುವಿನ ಸಂದೇಶ ನಿಮ್ಮಲ್ಲಿ ಹಬ್ಬಿಹರಡಿದಂತೆ ಎಲ್ಲೆಲ್ಲಿಯೂ ಪಸರಿಸಿ ಪ್ರಖ್ಯಾತವಾಗಲಿ.</verse>
				<verse number="2">ದುಷ್ಟರ ಹಾಗೂ ಕೆಡುಕರ ಬಲೆಗೆ ನಾವು ಬೀಳದಂತೆ ಪ್ರಾರ್ಥಿಸಿರಿ. ಏಕೆಂದರೆ, ವಿಶ್ವಾಸವೆಂಬುದು ಎಲ್ಲರಲ್ಲಿಯೂ ಇರುವುದಿಲ್ಲ.</verse>
				<verse number="3">ಪ್ರಭು ವಿಶ್ವಾಸಕ್ಕೆ ಪಾತ್ರರು. ಅವರು ನಿಮ್ಮನ್ನು ಸದೃಢರನ್ನಾಗಿ ಮಾಡಿ ಕೇಡಿನಿಂದ ನಿಮ್ಮನ್ನು ಕಾಪಾಡುವರು.</verse>
				<verse number="4">ನಾವು ನಿಮಗಿತ್ತ ಆಜ್ಞೆಗಳನ್ನು ಪಾಲಿಸಿಕೊಂಡು ಬರುತ್ತಿದ್ದೀರಿ; ಇನ್ನು ಮುಂದೆಯೂ ಪಾಲಿಸುತ್ತೀರಿ ಎಂದು ನಿಮ್ಮ ವಿಷಯವಾಗಿ ಪ್ರಭುವಿನಲ್ಲಿ ನಮಗೆ ಭರವಸೆಯಿದೆ.</verse>
				<verse number="5">ದೇವರ ಪ್ರೀತಿಯನ್ನೂ ಕ್ರಿಸ್ತಯೇಸುವಿನ ಸಹನೆಯನ್ನೂ ನೀವು ಕಲಿತುಕೊಳ್ಳುವಂತೆ, ಪ್ರಭುವೇ ನಿಮ್ಮ ಅಂತರಂಗವನ್ನು ಬೆಳಗಿಸಲಿ.</verse>
				<verse number="6">ಪ್ರಿಯ ಸಹೋದರರೇ, ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ: ನಾವು ನಿಮಗೆ ಬೋಧಿಸಿದ ಸದಾಚಾರವನ್ನು ಪಾಲಿಸದೆ, ಮೈಗಳ್ಳತನದಿಂದ ದಿನಗಳೆಯುವ ಯಾವ ಸೋದರನೊಂದಿಗೂ ಸಂಪರ್ಕವಿಟ್ಟುಕೊಳ್ಳಬೇಡಿ.</verse>
				<verse number="7">ನಾವು ಹೇಗೆ ನಡೆದುಕೊಂಡೆವೋ ಹಾಗೆಯೇ, ನೀವು ಸಹ ನಡೆದುಕೊಳ್ಳಬೇಕೆಂಬುದು ನಿಮಗೆ ತಿಳಿದ ವಿಷಯ. ನಾವು ನಿಮ್ಮ ಬಳಿಯಿದ್ದಾಗ ಸೋಮಾರಿಗಳಾಗಿರಲಿಲ್ಲ.</verse>
				<verse number="8">ಪುಕ್ಕಟೆಯಾಗಿ ನಾವು ಯಾರ ಅನ್ನವನ್ನೂ ಉಣ್ಣಲಿಲ್ಲ. ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳೂ ನಾವೇ ಕಷ್ಟಪಟ್ಟು ದುಡಿದಿದ್ದೇವೆ.</verse>
				<verse number="9">ನಿಮ್ಮಿಂದ ಪೋಷಣೆ ಪಡೆಯಲು ನಮಗೆ ಹಕ್ಕಿಲ್ಲವೆಂದಲ್ಲ; ನೀವು ನಮ್ಮನ್ನು ಅನುಸರಿಸಿ ನಡೆಯುವಂತೆ, ನಿಮಗೆ ಆದರ್ಶವಾಗಿ ಇರಬೇಕೆಂದೇ ನಾವು ಹೀಗೆ ಮಾಡಿದೆವು.</verse>
				<verse number="10">ನಾವು ನಿಮ್ಮೊಡನಿದ್ದಾಗ, “ದುಡಿಯಲೊಲ್ಲದವನು ಉಣಲೂಬಾರದು,” ಎಂದು ನಿಮಗೆ ಆಜ್ಞಾಪಿಸಿದ್ದೆವು.</verse>
				<verse number="11">ಈಗಲಾದರೋ ನಿಮ್ಮಲ್ಲಿ ಕೆಲವರು ದುಡಿಯದೆ ಮೈಗಳ್ಳರಾಗಿ ಅಲ್ಲಲ್ಲಿ ಅಲೆದಾಡುತ್ತಾ ಹರಟೆಮಲ್ಲರಾಗಿದ್ದಾರೆಂದು ನಮಗೆ ತಿಳಿದುಬಂದಿದೆ.</verse>
				<verse number="12">ಇಂಥವರು ತಮ್ಮ ಜೀವನೋಪಾಯಕ್ಕಾಗಿ ತಾವೇ ದುಡಿದು ಸಂಪಾದಿಸಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ಎಚ್ಚರಿಸಿ ಆಜ್ಞಾಪಿಸುತ್ತೇವೆ.</verse>
				<verse number="13">ನೀವಾದರೋ ಸಹೋದರರೇ, ಸತ್ಕಾರ್ಯದ ಸಾಧನೆ ಸಾಕಾಯಿತೆಂದು ಹೇಳಿದಿರಿ.</verse>
				<verse number="14">ಈ ಪತ್ರದ ಮೂಲಕ ನಾವು ಹೇಳಿರುವ ಮಾತನ್ನು ಯಾರಾದರೂ ಕೇಳದಿದ್ದರೆ, ಅಂಥವನನ್ನು ಗುರುತಿಸಿ ಅವನ ಸಹವಾಸವನ್ನೇ ತೊರೆದುಬಿಡಿ. ಹೀಗೆ ಮಾಡಿದರೆ, ಅವನಿಗೆ ನಾಚಿಕೆಯಾಗುವುದು.</verse>
				<verse number="15">ಆದರೂ ಅವನನ್ನು ಶತ್ರುವೆಂದು ಭಾವಿಸದೆ, ಸಹೋದರನಂತೆ ಕಂಡು, ಬುದ್ಧಿಹೇಳಿರಿ.</verse>
				<verse number="16">ಶಾಂತಿದಾತರಾದ ಪ್ರಭು ಎಲ್ಲ ಕಾಲಕ್ಕೂ ಎಲ್ಲ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭು ನಿಮ್ಮೆಲ್ಲರೊಡನೆ ಇರಲಿ!</verse>
				<verse number="17">ಪೌಲನೆಂಬ ನಾನು ಸ್ವತಃ ನನ್ನ ಕೈಯಿಂದಲೇ ಇದನ್ನು ಬರೆಯುತ್ತಿದ್ದೇನೆ. ನನ್ನ ಪ್ರತಿ ಪತ್ರಕ್ಕೂ, ನಾನು ಹಾಕುವ ಸಹಿ ಹಾಗು ನಾನು ಬರೆಯುವ ಧಾಟಿ ಇದೇ. ನಿಮಗೆ ನನ್ನ ಶುಭಾಶಯಗಳು!</verse>
				<verse number="18">ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೆಲ್ಲರೊಡನೆ ಇರಲಿ!</verse>
			</chapter>
		</book>
		<book number="54">
			<chapter number="1">
				<verse number="1">ಕ್ರೈಸ್ತವಿಶ್ವಾಸದಲ್ಲಿ ಸತ್‍ಪುತ್ರನಾದ ತಿಮೊಥೇಯನಿಗೆ-ಪೌಲನು ಬರೆಯುವ ಪತ್ರ.</verse>
				<verse number="2">ನಮ್ಮ ಉದ್ಧಾರಕರಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕ್ರಿಸ್ತಯೇಸುವಿನ ಆಜ್ಞಾನುಸಾರ, ನಾನು ಕ್ರಿಸ್ತಯೇಸುವಿನ ಪ್ರೇಷಿತನಾಗಿದ್ದೇನೆ. ಪಿತನಾದ ದೇವರೂ ನಮ್ಮ ಪ್ರಭುವಾದ ಕ್ರಿಸ್ತಯೇಸುವೂ ನಿನಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನೂ ಅನುಗ್ರಹಿಸಲಿ!</verse>
				<verse number="3">ನಾನು ಮಕೆದೋನಿಯಕ್ಕೆ ಹೋಗುವಾಗ ನಿನಗೆ ಹೇಳಿದಂತೆ, ನೀನು ಎಫೆಸದಲ್ಲಿಯೇ ಇರಬೇಕು. ಅಲ್ಲಿ ಕೆಲವರು ತಪ್ಪುಬೋಧನೆಯನ್ನು ಮಾಡುತ್ತಿದ್ದಾರೆ; ಅದನ್ನು ನೀನು ನಿಲ್ಲಿಸಬೇಕು.</verse>
				<verse number="4">ಕಟ್ಟುಕತೆಗಳಲ್ಲೂ ಕೊನೆಮೊದಲಿಲ್ಲದ ವಂಶಾವಳಿಗಳ ನಿರೂಪಣೆಗಳಲ್ಲೂ ಕಾಲಹರಣ ಮಾಡಬಾರದೆಂದು ಅವರಿಗೆ ಆಜ್ಞಾಪಿಸಬೇಕು. ಅಂಥ ಕತೆಗಳು, ವಂಶಾವಳಿಗಳು ಅನಗತ್ಯವಾದ ವಾದವಿವಾದಗಳಿಗೆ ಎಡೆಮಾಡುತ್ತವೆಯೇ ಹೊರತು ದೇವರ ಯೋಜನೆ ಕೈಗೂಡಲು ಅವು ಅನುಕೂಲವಾಗಿಲ್ಲ; ವಿಶ್ವಾಸದಿಂದ ಮಾತ್ರ ಅದು ಸಾಧ್ಯ.</verse>
				<verse number="5">ನಿರ್ಮಲ ಹೃದಯ, ಶುದ್ಧ ಮನಸ್ಸಾಕ್ಷಿ ಹಾಗೂ ನಿಷ್ಕಪಟ ವಿಶ್ವಾಸದಿಂದ ಹುಟ್ಟುವ ಪ್ರೀತಿಯು ವೃದ್ಧಿಯಾಗಬೇಕೆಂಬುದೇ ವಾಕ್ಯೋಪದೇಶದ ಉದ್ದೇಶ.</verse>
				<verse number="6">ಕೆಲವರಾದರೋ ಈ ಮಾರ್ಗವನ್ನು ಬಿಟ್ಟು ವ್ಯರ್ಥವಾದ ವಾದವಿವಾದಗಳಲ್ಲಿಯೇ ಕಾಲಹರಣ ಮಾಡುತ್ತಿದ್ದಾರೆ;</verse>
				<verse number="7">ತಮ್ಮ ಮಾತಿನ ಅರ್ಥವಾಗಲಿ, ತಮ್ಮ ವಾದದ ತಿರುಳಾಗಲಿ ಅವರಿಗೆ ತಿಳಿಯದಿದ್ದರೂ ಅವರು ಧರ್ಮೋಪದೇಶಕರಾಗಲು ಹವಣಿಸುತ್ತಾರೆ.</verse>
				<verse number="8">ನಮಗೆಲ್ಲರಿಗೂ ತಿಳಿದಿರುವಂತೆ ಧರ್ಮಶಾಸ್ತ್ರವೇನೋ ಒಳ್ಳೆಯದು. ಆದರೆ ಅದನ್ನು ನಿಷ್ಠೆಯಿಂದ ಕಾರ್ಯಗತ ಮಾಡಬೇಕು.</verse>
				<verse number="9">ಧರ್ಮಶಾಸ್ತ್ರದ ನಿರ್ಬಂಧನೆಗಳು ಸಜ್ಜನರಿಗಲ್ಲ; ಬದಲಿಗೆ ಅಕ್ರಮಿಗಳಿಗೆ, ಅವಿಧೇಯರಿಗೆ, ಅಧರ್ಮಿಗಳಿಗೆ, ಭಕ್ತಿಹೀನರಿಗೆ, ಪಾಪಿಗಳಿಗೆ, ಅಶುದ್ಧರಿಗೆ, ಪ್ರಾಪಂಚಿಕರಿಗೆ, ಹೆತ್ತವರನ್ನು ಹತ್ಯೆಮಾಡುವವರಿಗೆ ಮತ್ತು ಕೊಲೆಗಾರರಿಗೆ.</verse>
				<verse number="10">ಅಂತೆಯೇ, ಕಾಮುಕರಿಗೆ, ಸಲಿಂಗ ಪ್ರೇಮಿಗಳಿಗೆ, ನರಚೋರರಿಗೆ, ಸುಳ್ಳುಸಾಕ್ಷಿಗಳಿಗೆ ಸುಳ್ಳಾಣೆ ಇಡುವವರಿಗೆ ಮತ್ತು ಸದ್ಧರ್ಮ ವಿರೋಧಿಗಳಿಗೆ ಮುಂತಾದವರಿಗೆ ಈ ನಿರ್ಬಂಧನೆಗಳು ನೇಮಕವಾಗಿವೆ.</verse>
				<verse number="11">ಸ್ತುತ್ಯಾರ್ಹರೂ ಮಹಿಮಾಭರಿತರೂ ಆದ ದೇವರು ನನಗೆ ವಹಿಸಿರುವ ಶುಭಸಂದೇಶಕ್ಕೆ ಈ ಬೋಧನೆ ಅನುಗುಣವಾಗಿದೆ.</verse>
				<verse number="12">ಶುಭಸಂದೇಶದ ಸೇವೆಯನ್ನು ಕೈಗೊಳ್ಳಲು ಯೋಗ್ಯನೆಂದು ಎಣಿಸಿ ನನಗೆ ಬೇಕಾದ ಶಕ್ತಿಸಾಮರ್ಥ್ಯವನ್ನು ದಯಪಾಲಿಸಿದ ನಮ್ಮ ಪ್ರಭು ಯೇಸುಕ್ರಿಸ್ತರಿಗೆ ನಾನು ಕೃತಜ್ಞತೆಯನ್ನು ಸಲ್ಲಿಸುತ್ತೇನೆ.</verse>
				<verse number="13">ಹಿಂದೆ ನಾನು ಅವರನ್ನು ದೂಷಿಸಿದೆ, ಹಿಂಸಿಸಿದೆ, ಅವಮಾನಪಡಿಸಿದೆ. ಆದರೆ ದೇವರು ದಯಾಮಯಿ; ಆಗ ನಾನು ತಿಳಿಯದೆ ಅವಿಶ್ವಾಸಿಯಾಗಿ ಹಾಗೆ ಮಾಡಿದ್ದರಿಂದ ದೇವರು ನನಗೆ ಕರುಣೆತೋರಿದರು.</verse>
				<verse number="14">ಕ್ರಿಸ್ತಯೇಸುವಿನ ಅನ್ಯೋನ್ಯತೆಯಿಂದ ಲಭಿಸುವ ಪ್ರೀತಿ ವಿಶ್ವಾಸದಲ್ಲಿ ಭಾಗಿಯಾಗುವಂತೆ ಅವರು ನನ್ನ ಮೇಲೆ ತಮ್ಮ ಕೃಪಾವರಗಳನ್ನು ಹೇರಳವಾಗಿ ಸುರಿಸಿದರು.</verse>
				<verse number="15">ಕ್ರಿಸ್ತಯೇಸು, ಪಾಪಿಗಳ ಉದ್ಧಾರಕ್ಕಾಗಿ ಈ ಲೋಕಕ್ಕೆ ಬಂದರು ಎನ್ನುವ ಮಾತು ಸತ್ಯವಾದುದು, ನಂಬಲರ್ಹವಾದುದು ಹಾಗೂ ಎಲ್ಲರ ಅಂಗೀಕಾರಕ್ಕೆ ಯೋಗ್ಯವಾದುದು. ಅಂಥ ಪಾಪಿಗಳಲ್ಲಿ ನಾನೇ ಪ್ರಮುಖನು.</verse>
				<verse number="16">ಇದರಿಂದಾಗಿ, ಮುಂದೆ ವಿಶ್ವಾಸಿಗಳಾಗಿ ನಿತ್ಯಜೀವ ಪಡೆಯುವವರಿಗೆ ಆದರ್ಶ ದೊರಕುವಂತೆ ಕ್ರಿಸ್ತಯೇಸು ನನಗೆ ಪೂರ್ಣ ಸಹನೆ ತೋರಿದರು. ಇದು ದೇವರ ಕರುಣೆಯೇ ಸರಿ.</verse>
				<verse number="17">ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.</verse>
				<verse number="18">ತಿಮೊಥೇಯನೇ, ನನ್ನ ಕುಮಾರನೇ, ಹಿಂದೆ ನಿನ್ನ ಕುರಿತು ಮಾಡಲಾಗಿರುವ ಪ್ರವಾದನೆಗಳಿಗೆ ಅನುಗುಣವಾಗಿ ನಾನು ನಿನಗೆ ಕೊಡುವ ಆಜ್ಞೆ ಇದು: ಪ್ರವಾದನೆಗಳಿಂದ ಪ್ರೇರಣೆ ಪಡೆದು ದಿಟ್ಟಹೋರಾಟವನ್ನು ಮಾಡು.</verse>
				<verse number="19">ವಿಶ್ವಾಸವನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಸುರಕ್ಷಿತವಾಗಿ ಇಟ್ಟುಕೋ. ಕೆಲವರು ತಮ್ಮ ಮನಸ್ಸಾಕ್ಷಿಗೆ ವ್ಯತಿರಿಕ್ತವಾಗಿ ನಡೆದು ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ.</verse>
				<verse number="20">ಹುಮೆನಾಯನೂ ಅಲೆಗ್ಸಾಂಡರನೂ ಇದಕ್ಕೆ ನಿದರ್ಶನವಾಗಿದ್ದಾರೆ. ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ನಾನು ಸೈತಾನನ ವಶಕ್ಕೆ ಒಪ್ಪಿಸಿಬಿಟ್ಟಿದ್ದೇನೆ.</verse>
			</chapter>
			<chapter number="2">
				<verse number="1">ಮೊತ್ತಮೊದಲು ಮಾನವರೆಲ್ಲರಿಗೋಸ್ಕರ ದೇವರಿಗೆ ವಿಜ್ಞಾಪನೆ, ಪ್ರಾರ್ಥನೆ, ಬಿನ್ನಹ ಹಾಗೂ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಬೇಕೆಂದು ಕೇಳಿಕೊಳ್ಳುತ್ತೇನೆ.</verse>
				<verse number="2">ನಾವು ದೈವಭಕ್ತಿಯುಳ್ಳವರಾಗಿ ಮತ್ತು ಗೌರವಯುತರಾಗಿ ಶಾಂತಿಸಮಾಧಾನದಿಂದಲೂ ನೆಮ್ಮದಿಯಿಂದಲೂ ಜೀವಿಸಲು ಅನುಕೂಲವಾಗುವಂತೆ ಅರಸರಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ಪ್ರಾರ್ಥಿಸಬೇಕು.</verse>
				<verse number="3">ಹೀಗೆ ಮಾಡುವುದು ಒಳ್ಳೆಯದು, ನಮ್ಮ ಉದ್ಧಾರಕರಾದ ದೇವರಿಗೆ ಮೆಚ್ಚುಗೆಯಾದುದು.</verse>
				<verse number="4">ಎಲ್ಲಾ ಮಾನವರೂ ಸತ್ಯವನ್ನರಿತು ಜೀವೋದ್ಧಾರ ಪಡೆಯಬೇಕೆಂಬುದೇ ದೈವೇಚ್ಛೆ.</verse>
				<verse number="5">ದೇವರು ಒಬ್ಬರೇ; ದೇವರನ್ನೂ ಮಾನವರನ್ನೂ ಒಂದುಗೂಡಿಸುವ ಮಧ್ಯಸ್ಥರೂ ಒಬ್ಬರೇ; ಅವರೇ ಮಾನವರಾಗಿರುವ ಕ್ರಿಸ್ತಯೇಸು.</verse>
				<verse number="6">ಇವರು ಎಲ್ಲರ ಉದ್ಧಾರಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದರು. ಸರ್ವರೂ ಉದ್ಧಾರವಾಗಬೇಕೆಂಬ ದೈವೇಚ್ಛೆಗೆ ಸೂಕ್ತ ಸಮಯದಲ್ಲಿ ಸಾಕ್ಷಿ ನೀಡಿದರು.</verse>
				<verse number="7">ವಿಶ್ವಾಸ ಮತ್ತು ಸತ್ಯದ ಸಂದೇಶವನ್ನು ಸಾರುವುದಕ್ಕಾಗಿಯೇ ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಯೆಹೂದ್ಯೇತರರಿಗೆ ಬೋಧಕನನ್ನಾಗಿಯೂ ನೇಮಕಮಾಡಿದರು. ನಾನು ಹೇಳುತ್ತಿರುವುದು ಸುಳ್ಳಲ್ಲ, ಸತ್ಯಸ್ಯ ಸತ್ಯ.</verse>
				<verse number="8">ಪ್ರಾರ್ಥನೆ ಮಾಡುವ ಸ್ಥಳಗಳಲ್ಲೆಲ್ಲಾ ಪುರುಷರು ಕೋಪತಾಪವಿಲ್ಲದೆ, ಕೋಲಾಹಲವಿಲ್ಲದೆ ಕರಗಳನ್ನೆತ್ತಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಬೇಕು ಎಂಬುದೇ ನನ್ನ ಅಪೇಕ್ಷೆ.</verse>
				<verse number="9">ಅಂತೆಯೇ, ಮಹಿಳೆಯರು, ಸಭ್ಯತೆಯನ್ನು ಮೀರದೆ ಘನತೆ, ಗೌರವಕ್ಕೆ ಒಪ್ಪುವಂತಹ ಉಡುಪನ್ನು ಧರಿಸಿಕೊಳ್ಳಬೇಕು.</verse>
				<verse number="10">ಅವರು ಮಿತಿಮೀರಿದ ಕೇಶಾಲಂಕಾರ, ಆಭರಣಾಲಂಕಾರ, ವಸ್ತ್ರಾಲಂಕಾರಗಳಿಂದ ತಮ್ಮನ್ನೇ ಶೃಂಗರಿಸಿಕೊಳ್ಳುವುದರ ಬದಲು ದೈವಭಕ್ತೆಯರಾದ ಸ್ತ್ರೀಯರಿಗೆ ಲಕ್ಷಣವಾದ ಸತ್ಕಾರ್ಯಗಳಿಂದ ಅಲಂಕರಿಸಿಕೊಳ್ಳಲಿ.</verse>
				<verse number="11">ಮಹಿಳೆಯರು ಮೌನದಿಂದಲೂ ನಮ್ರತೆಯಿಂದಲೂ ಧರ್ಮೋಪದೇಶವನ್ನು ಕಲಿಯಲಿ.</verse>
				<verse number="12">ಅವರು ಬೋಧನೆಮಾಡುವುದಕ್ಕಾಗಲಿ, ಪುರುಷರ ಮೇಲೆ ಅಧಿಕಾರ ಚಲಾಯಿಸುವುದಕ್ಕಾಗಲಿ ನಾನು ಅನುಮತಿಸೆನು. ಅವರು ಮೌನ ತಾಳಬೇಕು.</verse>
				<verse number="13">ಏಕೆಂದರೆ, ದೇವರು ಮೊದಲು ಆದಾಮನನ್ನು, ಅನಂತರ ಹವ್ವಳನ್ನು ಸೃಷ್ಟಿಸಿದರು.</verse>
				<verse number="14">ಅಲ್ಲದೆ, ಮೊದಲು ವಂಚನೆಗೊಳಗಾಗಿ ದೇವರಿಗೆ ವಿರುದ್ಧ ಪಾಪಮಾಡಿದವಳು ಹವ್ವಳೇ ಹೊರತು ಆದಾಮನಲ್ಲ.</verse>
				<verse number="15">ಮಹಿಳೆ ಸಚ್ಚರಿತಳಾಗಿದ್ದು ವಿಶ್ವಾಸ, ಪ್ರೀತಿ ಮತ್ತು ಪವಿತ್ರತೆಯಲ್ಲಿ ಪ್ರವರ್ಧಿಸಿದರೆ, ತನ್ನ ತಾಯ್ತನದ ಮೂಲಕ ಸಂರಕ್ಷಣೆಯನ್ನು ಪಡೆಯುತ್ತಾಳೆ.</verse>
			</chapter>
			<chapter number="3">
				<verse number="1">ಯಾರಾದರೂ ಧರ್ಮಾಧ್ಯಕ್ಷನಾಗಲು ಅಪೇಕ್ಷಿಸಿದರೆ, ಅಂಥವನು ಉತ್ತಮ ಸೇವೆಯನ್ನೇ ಬಯಸುತ್ತಾನೆಂಬುದು ನಿಜ.</verse>
				<verse number="2">ಅಂಥವನು ನಿಂದಾರಹಿತನಾಗಿರಬೇಕು. ಏಕಪತ್ನಿ ಉಳ್ಳವನು, ಸ್ವಸ್ಥಬುದ್ಧಿಯುಳ್ಳವನು, ಜಿತೇಂದ್ರಿಯನು, ಗೌರವಸ್ಥನು ಮತ್ತು ಅತಿಥಿ ಸತ್ಕಾರ ಮಾಡುವವನು ಆಗಿರಬೇಕು. ಬೋಧಿಸುವುದರಲ್ಲಿ ಪ್ರವೀಣನಾಗಿರಬೇಕು.</verse>
				<verse number="3">ಅವನು ಕುಡುಕನು, ಕಲಹಪ್ರಿಯನು ಮತ್ತು ಹೊಡೆದಾಡುವವನು ಆಗಿರಬಾರದು. ಶಾಂತನೂ ದಯಾವಂತನೂ ಹಣದ ವ್ಯಾಮೋಹ ಇಲ್ಲದವನೂ ಆಗಿರಬೇಕು.</verse>
				<verse number="4">ತನ್ನ ಕುಟುಂಬವನ್ನು ಜವಾಬ್ದಾರಿಯುತವಾಗಿ ನಡೆಸುವವನೂ ಮಕ್ಕಳನ್ನು ಶಿಸ್ತಿನಲ್ಲಿ ಬೆಳೆಸಿ ಅವರಿಂದ ಗೌರವವನ್ನು ಪಡೆದುಕೊಳ್ಳುವವನೂ ಆಗಿರಬೇಕು.</verse>
				<verse number="5">ತನ್ನ ಕುಟುಂಬವನ್ನೇ ಜವಾಬ್ದಾರಿಯುತವಾಗಿ ನಡೆಸಲು ತಿಳಿಯದವನು ದೇವರ ಸಭೆಯನ್ನು ಹೇಗೆ ತಾನೇ ಪರಿಶೀಲಿಸಿಯಾನು?</verse>
				<verse number="6">ಆತನು ಹೊಸದಾಗಿ ಕ್ರೈಸ್ತಧರ್ಮವನ್ನು ಅಂಗೀಕರಿಸಿದವನಾಗಿರಬಾರದು; ಇಲ್ಲದಿದ್ದರೆ ಅಹಂಕಾರದಿಂದ ಉಬ್ಬಿಕೊಂಡು ಸೈತಾನನಂತೆಯೇ ದಂಡನೆಗೆ ಗುರಿಯಾದಾನು.</verse>
				<verse number="7">ಕ್ರೈಸ್ತರಲ್ಲದವರಿಂದಲೂ ಆತನು ಒಳ್ಳೆಯವನೆನಿಸಿಕೊಂಡಿರಬೇಕು. ಹೀಗಿದ್ದರೆ ಮಾತ್ರ ನಿಂದೆಗೊಳಗಾಗದೆ ಸೈತಾನನ ಕುತಂತ್ರಗಳಿಂದ ದೂರವಿರಬಲ್ಲನು.</verse>
				<verse number="8">ಸಭಾಸೇವಕರು ಸಜ್ಜನರಾಗಿರಬೇಕು. ಎರಡು ನಾಲಿಗೆಯುಳ್ಳವರೂ ಕುಡುಕರೂ ಲಾಭಕೋರರೂ ಆಗಿರಬಾರದು.</verse>
				<verse number="9">ವಿಶ್ವಾಸದ ನಿಗೂಢರಹಸ್ಯಗಳನ್ನು ಶುದ್ಧ ಮನಸ್ಸಾಕ್ಷಿಯಿಂದ ಕಾಪಾಡಿಕೊಂಡು ಬರುವವರಾಗಿರಬೇಕು.</verse>
				<verse number="10">ಇವರನ್ನು ಮೊದಲು ಪರೀಕ್ಷೆಗೊಳಪಡಿಸಬೇಕು. ಯಾವುದೇ ಕುಂದುಕೊರತೆ ಕಂಡುಬರದಿದ್ದಲ್ಲಿ, ಇವರನ್ನು ಸಭಾಸೇವಕರನ್ನಾಗಿ ನೇಮಿಸಬಹುದು.</verse>
				<verse number="11">ಅಂತೆಯೇ, ಸಭಾಸೇವಕಿಯರು ಸಜ್ಜನೆಯರಾಗಿರಬೇಕು. ಚಾಡಿಮಾತುಗಳನ್ನು ಆಡುವವರೂ ಮದ್ಯಾಸಕ್ತರೂ ಆಗಿರದೆ ಎಲ್ಲ ವಿಷಯಗಳಲ್ಲಿ ನಂಬಿಕಸ್ಥರಾಗಿರಬೇಕು.</verse>
				<verse number="12">ಸಭಾಸೇವಕರು ಏಕಪತ್ನಿಯುಳ್ಳವರಾಗಿದ್ದು ತಮ್ಮ ಮಕ್ಕಳನ್ನೂ ಕುಟುಂಬವನ್ನೂ ಜವಾಬ್ದಾರಿಯುತವಾಗಿ ನಡೆಸಿಕೊಂಡು ಹೋಗುವವರಾಗಿರಬೇಕು.</verse>
				<verse number="13">ನಿಷ್ಠೆಯಿಂದ ಸೇವೆಸಲ್ಲಿಸುವ ಸಭಾಸೇವಕರು ಒಳ್ಳೆಯ ಸ್ಥಾನಮಾನಗಳನ್ನು ಪಡೆಯುತ್ತಾರೆ: ಕ್ರಿಸ್ತಯೇಸುವಿನಲ್ಲಿ ಅವರಿಗಿರುವ ವಿಶ್ವಾಸವನ್ನು ಸಾರಲು ಧೈರ್ಯಸ್ಥೈರ್ಯವನ್ನು ಪಡೆಯುತ್ತಾರೆ.</verse>
				<verse number="14">ನಾನು ನಿನ್ನ ಬಳಿಗೆ ಬೇಗನೆ ಬರುವೆನೆಂಬ ನಿರೀಕ್ಷೆಯಿಂದಲೇ ಈ ಪತ್ರವನ್ನು ಬರೆಯುತ್ತಿದ್ದೇನೆ.</verse>
				<verse number="15">ಒಂದು ವೇಳೆ ನಾನು ಬರುವುದು ತಡವಾದರೆ, ದೇವರ ಮಂದಿರದಲ್ಲಿ ಅಂದರೆ, ಜೀವಸ್ವರೂಪಿಯಾದ ದೇವರ ಸಭೆಯಲ್ಲಿ, ಹೇಗೆ ನಡೆದುಕೊಳ್ಳಬೇಕು ಎಂಬುದು ನಿನಗೆ ತಿಳಿಯಲೆಂದು ಇದನ್ನು ಬರೆದಿದ್ದೇನೆ. ಸಭೆಯು ಸತ್ಯಕ್ಕೆ ಸ್ತಂಭವೂ ಅಸ್ತಿವಾರವೂ ಆಗಿದೆ.</verse>
				<verse number="16">ನಿಜವಾಗಿಯೂ ನಮ್ಮ ಧರ್ಮದ ನಿಗೂಢಾರ್ಥ ಶ್ರೇಷ್ಠವಾದದ್ದು ಎಂಬುದು ನಿಸ್ಸಂದೇಹವಾದ ವಿಷಯ. “ನರಮಾನವ ರೂಪದಲಿ ಪ್ರತ್ಯಕ್ಷನಾಗಿ ದೇವರಿಗೆ ಪ್ರಿಯನೆಂದು ಪವಿತ್ರಾತ್ಮನಿಂದ ಪ್ರಕಟಿತನಾಗಿ ದೇವದೂತರಿಗೆ ಪ್ರದರ್ಶಿತವಾಗಿ ಅನ್ಯಜನರಿಗೆ ಪ್ರಬೋಧಿತನಾಗಿ ಜಗದಲ್ಲೆಲ್ಲೂ ವಿಶ್ವಾಸಪಡೆದವನಾಗಿ ಸ್ವರ್ಗಕ್ಕೇರಿದಾತ ಮಹಿಮಾನ್ವಿತ ಯೇಸುಕ್ರಿಸ್ತ.</verse>
			</chapter>
			<chapter number="4">
				<verse number="1">ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೆ ಬಲಿಬಿದ್ದು, ದುರಾತ್ಮಗಳ ದುರುಪದೇಶಗಳಿಗೆ ಕಿವಿಗೊಟ್ಟು ವಿಶ್ವಾಸಭ್ರಷ್ಟರಾಗುವರೆಂದು ಪವಿತ್ರಾತ್ಮ ಸ್ಪಷ್ಟವಾಗಿ ತಿಳಿಸಿದ್ದಾರೆ.</verse>
				<verse number="2">ಕಪಟಿಗಳು ದುರ್ಬೋಧನೆಗಳನ್ನು ಪ್ರಸರಿಸುತ್ತಾರೆ. ಬರೆಹಾಕಿದ ಚರ್ಮದಂತೆ ಅವರ ಮನಸ್ಸಾಕ್ಷಿಯು ಸುಟ್ಟುಹೋಗಿದೆ.</verse>
				<verse number="3">ಮದುವೆಯಾಗಬಾರದು, ಇಂತಿಂಥ ಆಹಾರವನ್ನು ಸೇವಿಸಬಾರದು ಎಂದು ಬೋಧಿಸುತ್ತಾರೆ. ಆದರೆ ಸತ್ಯವನ್ನು ಅರಿತು ಯಾರು ವಿಶ್ವಾಸಿಗಳಾಗಿದ್ದಾರೋ ಅಂಥವರು ಎಲ್ಲ ಆಹಾರಪದಾರ್ಥಗಳನ್ನು ಕೃತಜ್ಞತಾಸ್ತುತಿಯೊಡನೆ ಸೇವಿಸಲೆಂದೇ ದೇವರು ಅವುಗಳನ್ನು ಸೃಷ್ಟಿಸಿದ್ದಾರೆ.</verse>
				<verse number="4">ದೇವರು ಸೃಷ್ಟಿಸಿದ್ದೆಲ್ಲವೂ ಒಳ್ಳೆಯದೇ. ಅವರಿಗೆ ಸ್ತುತಿಸಲ್ಲಿಸಿ ಸ್ವೀಕರಿಸಿದ ಯಾವುದನ್ನೂ ತಿರಸ್ಕರಿಸಬೇಕಾಗಿಲ್ಲ.</verse>
				<verse number="5">ಏಕೆಂದರೆ, ದೇವರ ವಾಕ್ಯದಿಂದಲೂ ನಮ್ಮ ಪ್ರಾರ್ಥನೆಯಿಂದಲೂ ಅದು ಪಾವನಗೊಳ್ಳುತ್ತದೆ.</verse>
				<verse number="6">ಈ ವಿಷಯಗಳನ್ನೆಲ್ಲಾ ಇತರ ಸಹೋದರರಿಗೆ ನೀನು ವಿವರಿಸುವವನಾದರೆ, ನೀನು ಕ್ರಿಸ್ತಯೇಸುವಿನ ಯೋಗ್ಯ ದಾಸನಾಗುವೆ, ನೀನು ಅನುಸರಿಸುತ್ತಾ ಬಂದಿರುವ ಸದ್ಬೋಧನೆಯಿಂದಲೂ ವಿಶ್ವಾಸದಿಂದಲೂ ಆಧ್ಯಾತ್ಮಿಕ ಪೋಷಣೆಯನ್ನು ಪಡೆಯುವೆ.</verse>
				<verse number="7">ಪ್ರಾಪಂಚಿಕ ಹಾಗೂ ತಿರುಳಿಲ್ಲದ ಕಟ್ಟುಕತೆಗಳನ್ನು ತಳ್ಳಿಬಿಟ್ಟು, ನಿನ್ನ ಭಕ್ತಿಯನ್ನು ವೃದ್ಧಿಮಾಡಿಕೋ.</verse>
				<verse number="8">ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.</verse>
				<verse number="9">ಈ ಉಪದೇಶ ಸತ್ಯವಾದುದು ಹಾಗೂ ನಂಬಲರ್ಹವಾದುದು; ಎಲ್ಲರ ಅಂಗೀಕಾರಕ್ಕೂ ಯೋಗ್ಯವಾದುದು.</verse>
				<verse number="10">ಸಕಲ ಮಾನವರ, ವಿಶೇಷವಾಗಿ ಕ್ರೈಸ್ತವಿಶ್ವಾಸಿಗಳ, ಉದ್ಧಾರಕರಾದ ಜೀವಸ್ವರೂಪ ದೇವರಲ್ಲಿಯೇ ನಾವು ಭರವಸೆಯಿಟ್ಟಿದ್ದೇವೆ; ಅದಕ್ಕಾಗಿಯೇ ನಾವು ಹೋರಾಡುತ್ತೇವೆ ಹಾಗೂ ಶ್ರಮಿಸುತ್ತೇವೆ.</verse>
				<verse number="11">ಈ ಅಂಶಗಳನ್ನು ಆಜ್ಞಾಪಿಸಿ ಬೋಧಿಸು.</verse>
				<verse number="12">ನೀನಿನ್ನೂ ಯುವಕನೆಂದು ನಿನ್ನನ್ನು ತಾತ್ಸಾರ ಮಾಡುವುದಕ್ಕೆ ಯಾರಿಗೂ ಅವಕಾಶ ಕೊಡಬೇಡ. ನಿನ್ನ ನಡೆನುಡಿ, ಪ್ರೀತಿವಿಶ್ವಾಸ ಹಾಗೂ ಪರಿಶುದ್ಧತೆಯ ವಿಷಯದಲ್ಲಿ ವಿಶ್ವಾಸಿಗಳಿಗೆಲ್ಲರಿಗೂ ನೀನೇ ಆದರ್ಶಪ್ರಾಯನಾಗಿರು.</verse>
				<verse number="13">ನಾನು ಬರುವವರೆಗೂ ಪವಿತ್ರಗ್ರಂಥವನ್ನು ಪಠಿಸುವುದರಲ್ಲೂ ಪ್ರಬೋಧಿಸುವುದರಲ್ಲೂ ಉಪದೇಶಿಸುವುದರಲ್ಲೂ ಆಸಕ್ತನಾಗಿರು.</verse>
				<verse number="14">ನಿನ್ನಲ್ಲಿರುವ ವರದಾನವನ್ನು ಅಲಕ್ಷಿಸಬೇಡ. ಸಭೆಯ ಹಿರಿಯರು ನಿನ್ನ ಮೇಲೆ ದೈವವಾಕ್ಯದ ಉಚ್ಚಾರದೊಂದಿಗೆ ಹಸ್ತನಿಕ್ಷೇಪಮಾಡಿದಾಗ ಈ ವರವು ನಿನಗೆ ಲಭಿಸಿತಲ್ಲವೇ?</verse>
				<verse number="15">ನಿನ್ನ ಆಧ್ಯಾತ್ಮಿಕ ಪ್ರಗತಿ ಎಲ್ಲರಿಗೂ ಗೋಚರವಾಗುವಂತೆ ಈ ಕಾರ್ಯಸಾಧನೆಗಳಲ್ಲಿ ನಿರತನಾಗಿರು;</verse>
				<verse number="16">ಇವುಗಳಲ್ಲೇ ಮಗ್ನನಾಗಿರು. ಇದರಿಂದ ನಿನ್ನ ಮತ್ತು ನಿನ್ನ ಉಪದೇಶವನ್ನು ಕೇಳುವವರ ಜೀವೋದ್ಧಾರವನ್ನು ಸಾಧಿಸುವೆ.</verse>
			</chapter>
			<chapter number="5">
				<verse number="1">ಹಿರಿಯರನ್ನು ಗದರಿಸಬೇಡ; ಅವರನ್ನು ತಂದೆಯಂತೆ ಭಾವಿಸಿ ಗೌರವದಿಂದ ತಿಳುವಳಿಕೆ ನೀಡು. ಯುವಕರೊಡನೆ ಸೋದರಭಾವನೆಯಿಂದ ವರ್ತಿಸು.</verse>
				<verse number="2">ವೃದ್ಧೆಯರೊಡನೆ ಮಾತೃಭಾವನೆಯಿಂದ ನಡೆದುಕೋ. ಯುವತಿಯರನ್ನು ಅಕ್ಕತಂಗಿಯರೆಂದು ಪರಿಗಣಿಸಿ, ಪರಿಶುದ್ಧ ಭಾವನೆಯಿಂದ ನಡೆದುಕೋ.</verse>
				<verse number="3">ದಿಕ್ಕಿಲ್ಲದ ವಿಧವೆಯರನ್ನು ಸಂರಕ್ಷಿಸು.</verse>
				<verse number="4">ವಿಧವೆಯಾದವಳಿಗೆ ಮಕ್ಕಳಾಗಲಿ ಮೊಮ್ಮಕ್ಕಳಾಗಲಿ ಇದ್ದರೆ, ಆ ಮಕ್ಕಳು ಮೊತ್ತಮೊದಲು ತಮ್ಮ ಸ್ವಂತ ಕುಟುಂಬಕ್ಕೆ ಸಹಾಯಮಾಡಬೇಕಾದುದು ಅವರ ಧಾರ್ಮಿಕ ಕರ್ತವ್ಯವೆಂಬುದು ಅವರಿಗೆ ತಿಳಿದಿರಲಿ. ಹೀಗೆ ಅವರು ತಮ್ಮ ತಂದೆತಾಯಿಯರಿಗೆ ಪ್ರತ್ಯುಪಕಾರಮಾಡಿದಂತಾಗುತ್ತದೆ. ಅಲ್ಲದೆ, ಇದು ದೇವರ ದೃಷ್ಟಿಯಲ್ಲಿ ಮೆಚ್ಚುಗೆ ಪಡೆದುದು.</verse>
				<verse number="5">ದಿಕ್ಕಿಲ್ಲದೆ ಒಬ್ಬಂಟಿಗಳಾಗಿರುವ ವಿಧವೆ ದೇವರ ಮೇಲೆ ಭರವಸೆಯಿಟ್ಟು ಹಗಲಿರುಳು ಪ್ರಾರ್ಥನೆಗಳಲ್ಲೂ ವಿಜ್ಞಾಪನೆಗಳಲ್ಲೂ ನಿರತಳಾಗಿರುತ್ತಾಳೆ.</verse>
				<verse number="6">ವಿಲಾಸಿಯಾದ ವಿಧವೆಯಾದರೋ ಬದುಕಿದ್ದರೂ ಸತ್ತಂತೆಯೇ.</verse>
				<verse number="7">ವಿಧವೆಯರು ಯಾವ ದೋಷಾರೋಪಣೆಗೂ ಗುರಿಯಾಗದಂತೆ, ಅವರಿಗೆ ಈ ಆಜ್ಞೆಗಳನ್ನು ಕೊಡು.</verse>
				<verse number="8">ಯಾರಾದರೂ ತನ್ನ ಸಂಬಂಧಿಕರನ್ನು, ವಿಶೇಷವಾಗಿ ಸ್ವಂತ ಕುಟುಂಬದವರನ್ನು ಸಂರಕ್ಷಿಸದೆಹೋದರೆ, ಅಂಥವನು ವಿಶ್ವಾಸಭ್ರಷ್ಟನೂ ಅವಿಶ್ವಾಸಿಗಳಿಗಿಂತ ತುಚ್ಛನಾದವನೂ ಆಗಿದ್ದಾನೆ.</verse>
				<verse number="9">ಅರವತ್ತು ವರ್ಷಕ್ಕೆ ಕಡಿಮೆಯಿಲ್ಲದ ವಿಧವೆಯನ್ನು, ವಿಧವೆಯರ ಪಟ್ಟಿಗೆ ಸೇರಿಸಿಕೊಳ್ಳಬಹುದು. ಅಂಥವಳು ಒಂದೇ ಸಾರಿ ಮದುವೆ ಆದವಳಾಗಿರಬೇಕು.</verse>
				<verse number="10">ಆಕೆ ಮಕ್ಕಳನ್ನು ಯೋಗ್ಯವಾಗಿ ಸಾಕಿಸಲಹಿದವಳೂ ಅತಿಥಿಸತ್ಕಾರ ಮಾಡಿದವಳೂ ಆಗಿರಬೇಕು. ಅಲ್ಲದೆ, ದೇವಜನರ ಪಾದಸೇವೆ ಮಾಡಿದವಳೂ ಸಂಕಷ್ಟದಲ್ಲಿದ್ದವರಿಗೆ ಸಹಾಯ ಮಾಡಿದವಳೂ ಆಗಿರಬೇಕು. ಇಂಥಾ ಪುಣ್ಯಕಾರ್ಯಗಳನ್ನು ಮಾಡಿ ಸತ್ಕ್ರಿಯೆಗಳಿಗೆ ಹೆಸರಾದವಳೂ ಆಗಿರಬೇಕು.</verse>
				<verse number="11">ಯೌವನಸ್ಥ ವಿಧವೆಯರನ್ನು ಆ ಪಟ್ಟಿಯಲ್ಲಿ ಸೇರಿಸಬೇಡ. ಏಕೆಂದರೆ, ಯೇಸುಕ್ರಿಸ್ತರಿಂದ ವಿಮುಖರನ್ನಾಗಿಸುವ ಕಾಮನೆಗಳು ಇವರನ್ನು ಮರುಮದುವೆಗೆ ಹುರಿದುಂಬಿಸಬಹುದು.</verse>
				<verse number="12">ಹೀಗೆ, ಅವರು ಮೊದಲು ಮಾಡಿದ ವಾಗ್ದಾನವನ್ನು ಉಲ್ಲಂಘಿಸಿ ತೀರ್ಪಿಗೆ ಗುರಿಯಾಗುತ್ತಾರೆ.</verse>
				<verse number="13">ಇದಲ್ಲದೆ ಅವರು ಮನೆಮನೆಗಳನ್ನು ಸುತ್ತುತ್ತಾ ಅಲೆದಾಡುತ್ತಾ ಹರಟೆಮಲ್ಲರೂ ಸೋಮಾರಿಗಳೂ ಆಗಬಹುದು. ಇತರರ ವಿಷಯಗಳಲ್ಲಿ ತಲೆಹಾಕಬಹುದು.</verse>
				<verse number="14">ಆದ್ದರಿಂದ, ತರುಣಿ ವಿಧವೆಯರು ವಿವಾಹಮಾಡಿಕೊಂಡು, ಮಕ್ಕಳನ್ನು ಹೆತ್ತು ಸಂಸಾರವನ್ನು ನಡೆಸುವುದೇ ಒಳ್ಳೆಯದೆಂದು ನನ್ನ ಭಾವನೆ. ಆಗ ನಮ್ಮನ್ನು ನಿಂದಿಸಲು ವಿರೋಧಿಗಳಿಗೆ ಆಸ್ಪದವಿರುವುದಿಲ್ಲ.</verse>
				<verse number="15">ಏಕೆಂದರೆ, ಈಗಾಗಲೇ ಕೆಲವು ವಿಧವೆಯರು ದಾರಿತಪ್ಪಿ ಸೈತಾನನನ್ನು ಹಿಂಬಾಲಿಸಿದ್ದಾರೆ.</verse>
				<verse number="16">ಕ್ರೈಸ್ತವಿಶ್ವಾಸಿಯಾದ ಒಬ್ಬ ಮಹಿಳೆಯ ಮನೆಯಲ್ಲಿ ವಿಧವೆಯಿದ್ದರೆ, ಆಕೆಯೇ ಅವರನ್ನು ಸಂರಕ್ಷಿಸಲಿ. ಅವರ ಪೋಷಣೆಯ ಹೊಣೆಯನ್ನು ಧರ್ಮಸಭೆ ವಹಿಸಿಕೊಳ್ಳುವುದು ತಪ್ಪುತ್ತದೆ. ಆಗ ನಿಜವಾಗಿಯೂ ದಿಕ್ಕಿಲ್ಲದ ವಿಧವೆಯರಿಗೆ ಸಭೆ ನೆರವು ನೀಡಲು ಸಾಧ್ಯವಾಗುತ್ತದೆ.</verse>
				<verse number="17">ಸರಿಯಾಗಿ ಆಡಳಿತವನ್ನು ನಿರ್ವಹಿಸುತ್ತಿರುವ ಸಭಾಹಿರಿಯರು, ವಿಶೇಷವಾಗಿ ಬೋಧನೆಯಲ್ಲೂ ಉಪದೇಶದಲ್ಲೂ ಶ್ರಮಿಸುತ್ತಿರುವವರು, ಇಮ್ಮಡಿ ಸಂಭಾವನೆಗೆ ಯೋಗ್ಯರು.</verse>
				<verse number="18">‘ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬೇಡ’ ಎಂದೂ, ‘ಕಾರ್ಮಿಕನು ಕೂಲಿಗೆ ಅರ್ಹನು’ ಎಂದೂ ಧರ್ಮಶಾಸ್ತ್ರ ಹೇಳುತ್ತದೆಯಲ್ಲವೇ?</verse>
				<verse number="19">ಸಭಾಹಿರಿಯರ ವಿರುದ್ಧ ಯಾರಾದರೂ ದೂರು ತಂದರೆ, ಇಬ್ಬರ ಅಥವಾ ಮೂವರ ಸಾಕ್ಷಿ ಇಲ್ಲದೆ ಅದನ್ನು ಲಕ್ಷ್ಯಕ್ಕೆ ತಂದುಕೊಳ್ಳಬೇಡ.</verse>
				<verse number="20">ಯಾರಾದರೂ ಪಾಪದಲ್ಲಿಯೇ ಮುಂದುವರಿಯುತ್ತಾ ಇದ್ದರೆ, ಅಂಥವರನ್ನು ಬಹಿರಂಗವಾಗಿಯೇ ಖಂಡಿಸು. ಇದು ಇತರರಿಗೂ ಎಚ್ಚರಿಕೆಯಾಗಿರಲಿ.</verse>
				<verse number="21">ದೇವರ ಸನ್ನಿಧಿಯಲ್ಲಿಯೂ ಕ್ರಿಸ್ತಯೇಸುವಿನ ಪ್ರಸನ್ನತೆಯಲ್ಲಿಯೂ ಹಾಗೂ ಆಯ್ಕೆಯಾದ ದೇವದೂತರ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದಿದು: ಪೂರ್ವಾಗ್ರಹದಿಂದಾಗಲಿ, ಪಕ್ಷಪಾತದಿಂದಾಗಲಿ ಏನೂ ಮಾಡಬೇಡ.</verse>
				<verse number="22">ದೇವರ ಸೇವೆಗೆಂದು ಅವಸರದಿಂದ ಯಾರ ಮೇಲೂ ಹಸ್ತನಿಕ್ಷೇಪ ಮಾಡಿ ದೀಕ್ಷೆ ನೀಡಬೇಡ. ಹಾಗೆ ಮಾಡಿದರೆ, ಅವರ ಪಾಪಗಳಲ್ಲಿ ನೀನೂ ಭಾಗಿಯಾಗುವೆ. ನೀನು ಪರಿಶುದ್ಧನಾಗಿರುವ ಹಾಗೆ ನೋಡಿಕೋ.</verse>
				<verse number="23">ಆಗಾಗ್ಗೆ ನೀನು ಅಸ್ವಸ್ಥನಾಗುವುದುಂಟು. ಆದ್ದರಿಂದ ಬರೀ ನೀರನ್ನು ಕುಡಿದರೆ ಸಾಲದು. ನಿನ್ನ ಜೀರ್ಣಶಕ್ತಿಯ ಸುಧಾರಣೆಗಾಗಿ ಸ್ವಲ್ಪ ದ್ರಾಕ್ಷಾರಸವನ್ನೂ ಸೇವಿಸು.</verse>
				<verse number="24">ಕೆಲವರ ಪಾಪಕೃತ್ಯಗಳು ತೀರ್ಪಿಗೆ ಮುಂಚೆಯೇ ಬಟ್ಟಬಯಲಾಗುತ್ತವೆ; ಇನ್ನು ಕೆಲವರ ಪಾಪಗಳು ಮರೆಯಾಗಿದ್ದು ಕ್ರಮೇಣ ಬೆಳಕಿಗೆ ಬರುತ್ತವೆ.</verse>
				<verse number="25">ಅಂತೆಯೇ, ಕೆಲವರ ಸತ್ಕಾರ್ಯಗಳು ಎಲ್ಲರಿಗೂ ಬೇಗನೆ ಗೋಚರವಾಗುತ್ತವೆ. ಇನ್ನು ಕೆಲವರ ಸತ್ಕಾರ್ಯಗಳು ಅಗೋಚರವಾಗಿದ್ದರೂ ಸದಾ ಗುಟ್ಟಾಗಿರಲಾರವು.</verse>
			</chapter>
			<chapter number="6">
				<verse number="1">ದಾಸ್ಯದಲ್ಲಿರುವವರು ತಮ್ಮ ಯಜಮಾನರನ್ನು ಎಲ್ಲಾ ವಿಧದಲ್ಲೂ ಗೌರವಿಸಬೇಕು. ಇಲ್ಲದಿದ್ದರೆ, ದೇವರ ಹೆಸರಿಗೂ ನಮ್ಮ ಬೋಧನೆಗೂ ಕಳಂಕವುಂಟಾಗುತ್ತದೆ.</verse>
				<verse number="2">ಒಂದು ವೇಳೆ ಯಜಮಾನರು ಕ್ರೈಸ್ತವಿಶ್ವಾಸಿಗಳಾಗಿದ್ದರೆ ತಮ್ಮ ಯಜಮಾನರು ಸಹೋದರ ವರ್ಗದವರು ಎಂದು ಉದಾಸೀನ ಮಾಡಬಾರದು. ಬದಲಿಗೆ ಹೆಚ್ಚಿನ ಉತ್ಸಾಹದಿಂದ ಸೇವೆಸಲ್ಲಿಸಬೇಕು. ಏಕೆಂದರೆ, ಅವರ ಸೇವೆಯ ಪ್ರಯೋಜನವನ್ನು ಪಡೆಯುತ್ತಿರುವ ಯಜಮಾನರು, ಕ್ರೈಸ್ತವಿಶ್ವಾಸಿಗಳೂ ಪ್ರೀತಿಗೆ ಪಾತ್ರರಾದವರು. ಈ ವಿಷಯಗಳ ಬಗ್ಗೆ ಆಜ್ಞಾಪೂರ್ವಕವಾಗಿ ಬೋಧಿಸು.</verse>
				<verse number="3">ಯಾರಾದರೂ ನಮ್ಮ ಧಾರ್ಮಿಕ ಉಪದೇಶವನ್ನು ಅನುಸರಿಸದೆ, ಪ್ರಭು ಯೇಸುಕ್ರಿಸ್ತರ ನೈಜ ಬೋಧನೆಯನ್ನು ಒಪ್ಪಿಕೊಳ್ಳದೆ ಭಿನ್ನ ಬೋಧನೆಯನ್ನು ಮಾಡುವುದಾದರೆ, ಅಂಥವನು ಅಹಂಭಾವಿ ಹಾಗೂ ಅಜ್ಞಾನಿಯೇ ಸರಿ.</verse>
				<verse number="4">ಅಂಥವನಿಗೆ ಒಣ ವಾಗ್ವಾದಗಳಲ್ಲಿ ಮತ್ತು ಬರಡು ಮಾತುಗಳಲ್ಲಿ ಬಲು ಹಂಬಲ. ಇವುಗಳು ಅಸೂಯೆ, ಕಲಹ, ದೂಷಣೆ, ಅನುಮಾನ ಮತ್ತು ಕಚ್ಚಾಟಗಳಿಗೆ ಎಡೆಕೊಡುತ್ತವೆ.</verse>
				<verse number="5">ಮತಿಗೆಟ್ಟ ಅಂಥವರಲ್ಲಿ ಸತ್ಯವೆಂಬುದು ಇರದು. ಧಾರ್ಮಿಕ ಸೇವೆಯು ಧನಗಳಿಕೆಯ ಸಾಧನವೆಂದೇ ಇವರ ನಂಬಿಕೆ.</verse>
				<verse number="6">ಇರುವುದರಲ್ಲೇ ಸಂತೃಪ್ತನಾಗಿರುವವನು ಭಕ್ತಿಯಲ್ಲಿ ನಿಜಕ್ಕೂ ಶ್ರೀಮಂತನಾಗಿರುತ್ತಾನೆ.</verse>
				<verse number="7">ಹುಟ್ಟಿದಾಗ ನಾವು ಈ ಲೋಕಕ್ಕೆ ಏನನ್ನೂ ತರಲಿಲ್ಲ; ಸಾಯುವಾಗ ಏನನ್ನೂ ಕೊಂಡು ಒಯ್ಯುವುದಿಲ್ಲ.</verse>
				<verse number="8">ನಮಗೆ ಊಟ, ಬಟ್ಟೆ ಇದ್ದರೆ ಅಷ್ಟೇ ಸಾಕು.</verse>
				<verse number="9">ಐಶ್ವರ್ಯವಂತರಾಗಬೇಕೆಂದು ಆಶಿಸುವವರು ಅನೇಕ ಪ್ರಲೋಭನೆಗಳಿಗೆ ಒಳಗಾಗುತ್ತಾರೆ. ನಿರರ್ಥಕವೂ ಹಾನಿಕರವೂ ಆದ ಆಶಾಪಾಶಗಳಲ್ಲಿ ಸಿಕ್ಕಿಬೀಳುತ್ತಾರೆ. ಇಂಥ ದುರಾಶೆಗಳು ಮನುಷ್ಯರನ್ನು ಕೇಡಿಗೂ ವಿನಾಶಕ್ಕೂ ಒಯ್ಯುತ್ತವೆ.</verse>
				<verse number="10">ಹಣದ ವ್ಯಾಮೋಹವೇ ಎಲ್ಲಾ ಕೇಡುಗಳಿಗೂ ಮೂಲ. ಹಣದ ವ್ಯಾಮೋಹದಿಂದಲೇ ಹಲವರು ವಿಶ್ವಾಸದಿಂದ ದೂರ ಸರಿದು, ತಮ್ಮ ಹೃದಯಗಳನ್ನು ಹಲತರದ ತಿವಿತಗಳಿಗೆ ಗುರಿಮಾಡುತ್ತಾರೆ.</verse>
				<verse number="11">ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು.</verse>
				<verse number="12">ನಿತ್ಯಜೀವವೆಂಬ ಬಹುಮಾನವನ್ನು ಗಳಿಸಲು ವಿಶ್ವಾಸವೆಂಬ ಪಂದ್ಯದಲ್ಲಿ ಉತ್ತಮ ಓಟಗಾರನಾಗಿ ಓಡು. ಇದಕ್ಕಾಗಿಯೇ ದೇವರು ನಿನ್ನನ್ನು ಆರಿಸಿಕೊಂಡರೆಂಬುದನ್ನು ಮರೆಯಬೇಡ. ಈ ಗುರಿಯನ್ನು ಮುಂದಿಟ್ಟುಕೊಂಡೇ ನೀನು ಅನೇಕರ ಮುಂದೆ ವಿಶ್ವಾಸಪ್ರಮಾಣ ಮಾಡಿರುವೆ.</verse>
				<verse number="13">ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ:</verse>
				<verse number="14">ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷರಾಗುವ ತನಕ ಯಾವ ದೋಷಾರೋಪಣೆಗೂ ಎಡೆಗೊಡದೆ ಈ ಕಟ್ಟಳೆಗಳೆಲ್ಲವನ್ನೂ ಪ್ರಾಮಾಣಿಕತೆಯಿಂದ ಅನುಸರಿಸು:</verse>
				<verse number="15">ಸೂಕ್ತಕಾಲದಲ್ಲಿ ಕ್ರಿಸ್ತಯೇಸುವನು ಪ್ರತ್ಯಕ್ಷಪಡಿಸುವನು ಪರಮ ದೇವನು. ಆ ದೇವರು ಪರಮಾನಂದನು ಏಕಾಧಿಪತಿ, ರಾಜಾಧಿರಾಜನು ಒಡೆಯರಿಗೆಲ್ಲಾ ಒಡೆಯನು, ಅಮರನು ಅಗಮ್ಯ ಜ್ಯೋತಿಯಲಿ ವಾಸಿಸುವವನು. ಆತನನು ಕಂಡವರಾರೂ ಇಲ್ಲ ಕಾಣಬಲ್ಲವರಾರೂ ಇಲ್ಲ. ಆತನೊಬ್ಬನಿಗೆ ಮಹಿಮೆಯೂ ಗೌರವವೂ ಪ್ರಭುತ್ವವೂ ಸಲ್ಲಲಿ ಎಂದೆಂದಿಗೂ, ಆಮೆನ್.</verse>
				<verse number="16"></verse>
				<verse number="17">ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.</verse>
				<verse number="18">ಅವರು ಸದ್ಗುಣಶೀಲರಾಗಬೇಕು, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಶ್ರೀಮಂತರಾಗಿರಬೇಕು. ದಾನಶೀಲರೂ ಇತರರೊಂದಿಗೆ ಪಾಲು ಹಂಚಿಕೊಳ್ಳುವವರೂ ಪರೋಪಕಾರಿಗಳೂ ಆಗಿರಬೇಕು.</verse>
				<verse number="19">ಹೀಗೆ, ಅವರು ತಮ್ಮ ಭವಿಷ್ಯಜೀವನಕ್ಕೆ ಭದ್ರವಾದ ಬುನಾದಿಯಾಗಬಲ್ಲ ನಿಧಿಯನ್ನು ಕೂಡಿಸಿಕೊಳ್ಳಬೇಕೆಂದು ವಿಧಿಸು. ಆಗ ಅವರು ಶಾಶ್ವತ ಜೀವವನ್ನು ಪಡೆಯುವರು.</verse>
				<verse number="20">ಪ್ರಿಯ ತಿಮೊಥೇಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡಿಕೋ. ಪ್ರಾಪಂಚಿಕ ವ್ಯರ್ಥ ಸಂಭಾಷಣೆಗಳಿಂದಲೂ ‘ಜ್ಞಾನಿ'ಗಳೆಂದು ತಪ್ಪಾಗಿ ಕೊಚ್ಚಿಕೊಳ್ಳುವವರ ವಾಗ್ವಾದಗಳಿಂದಲೂ ದೂರವಿರು.</verse>
				<verse number="21">ಕೆಲವರು ಇಂಥ ಕಪಟಜ್ಞಾನವನ್ನು ಅವಲಂಬಿಸಿ ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ. ದೇವರ ಅನುಗ್ರಹ ನಿಮ್ಮಲ್ಲಿರಲಿ!</verse>
			</chapter>
		</book>
		<book number="55">
			<chapter number="1">
				<verse number="1">ನನ್ನ ಪ್ರೀತಿಯ ಪುತ್ರ ತಿಮೊಥೇಯನಿಗೆ ಪೌಲನು ಬರೆಯುವ ಪತ್ರ. ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅಮರ ಜೀವದ ವಾಗ್ದಾನವನ್ನು ಸಾರಲು ದೈವಚಿತ್ತಾನುಸಾರ ಪ್ರೇಷಿತನಾದ ನಾನು ತಿಳಿಸುವುದೇನೆಂದರೆ: ಪಿತನಾಗಿರುವ ದೇವರೂ ಒಡೆಯರಾದ ಕ್ರಿಸ್ತಯೇಸುವೂ ನಿಮಗೆ ಕೃಪೆಯನ್ನೂ ಕರುಣೆಯನ್ನೂ ಶಾಂತಿಯನ್ನು ಅನುಗ್ರಹಿಸಲಿ!</verse>
				<verse number="2"></verse>
				<verse number="3">ನಾನು ಹಗಲಿರುಳೂ ನನ್ನ ಪ್ರಾರ್ಥನೆಯಲ್ಲಿ ತಪ್ಪದೆ ನಿನ್ನನ್ನು ಸ್ಮರಿಸಿಕೊಳ್ಳುತ್ತೇನೆ. ನನ್ನ ಪೂರ್ವಿಕರ ಹಾಗೆ ಶುದ್ಧಮನಸ್ಸಾಕ್ಷಿಯಿಂದ ನನ್ನ ಆರಾಧ್ಯ ದೇವರಿಗೆ ನಿನ್ನ ವಿಷಯವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಅಂದು ನೀನು ಸುರಿಸಿದ ಕಣ್ಣೀರನ್ನು ನಾನು ಇನ್ನೂ ಮರೆತಿಲ್ಲ. ನಿನ್ನನ್ನು ಪುನಃ ನೋಡಿ ಆನಂದಪಡಬೇಕೆಂದು ಹಂಬಲಿಸುತ್ತಿದ್ದೇನೆ.</verse>
				<verse number="4"></verse>
				<verse number="5">ನಿನ್ನ ದೃಢವಿಶ್ವಾಸವು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿ ಲೋವಿಯಳಲ್ಲೂ ತಾಯಿ ಯೂನಿಸಳಲ್ಲೂ ನೆಲೆಗೊಂಡಿದ್ದ ವಿಶ್ವಾಸ ಈಗ ನಿನ್ನಲ್ಲೂ ಪೂರ್ಣವಾಗಿ ನೆಲೆಗೊಂಡಿದೆಯೆಂದು ನಾನು ನಂಬಿದ್ದೇನೆ.</verse>
				<verse number="6">ನಾನು ನಿನ್ನ ಮೇಲೆ ಹಸ್ತ ನಿಕ್ಷೇಪಮಾಡಿ ಪ್ರಾರ್ಥಿಸಿದಾಗ ನೀನು ಪಡೆದಂಥ ವರದಾನವನ್ನು ಪುನಃ ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಿಸುತ್ತೇನೆ.</verse>
				<verse number="7">ದೇವರು ನಮಗೆ ಪ್ರದಾನಮಾಡಿರುವ ಪವಿತ್ರಾತ್ಮ ನಮ್ಮನ್ನು ಹೇಡಿಗಳನ್ನಾಗಿ ಮಾಡುವುದಿಲ್ಲ; ನಮ್ಮಲ್ಲಿ ದೈವೀಶಕ್ತಿ, ಪ್ರೀತಿ ಹಾಗೂ ಸಂಯಮಗಳು ಪ್ರವರ್ಧಿಸುವಂತೆ ಮಾಡುತ್ತಾರೆ.</verse>
				<verse number="8">ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.</verse>
				<verse number="9">ನಾವು ಸ್ವಂತ ಸತ್ಕಾರ್ಯಗಳಿಂದಲ್ಲ, ದೇವರ ಯೋಜನೆ ಹಾಗೂ ಅನುಗ್ರಹಗಳಿಂದಲೇ ಜೀವೋದ್ಧಾರ ವರವನ್ನು ಪಡೆದಿದ್ದೇವೆ; ದೇವರ ಪ್ರಜೆಗಳೆನಿಸಿಕೊಂಡಿದ್ದೇವೆ. ಈ ಅನುಗ್ರಹವನ್ನು ಕ್ರಿಸ್ತಯೇಸುವಿನಲ್ಲಿ ಅನಾದಿಯಿಂದಲೇ ನಮಗೆ ಕೊಡಲಾಯಿತು.</verse>
				<verse number="10">ಈ ಕಾಲದಲ್ಲೂ ನಮ್ಮ ಉದ್ಧಾರಕ ಕ್ರಿಸ್ತಯೇಸುವಿನ ಪ್ರತ್ಯಕ್ಷದ ಮೂಲಕ ಅದನ್ನು ಬಹಿರಂಗಪಡಿಸಲಾಗಿದೆ. ಮೃತ್ಯುಶಕ್ತಿಯನ್ನು ವಿನಾಶಗೊಳಿಸಿ ಅಮರ ಜೀವವನ್ನು ಶುಭಸಂದೇಶದ ಮೂಲಕ ಬೆಳಕಿಗೆ ತಂದವರು ಯೇಸುವೇ.</verse>
				<verse number="11">ಈ ಶುಭಸಂದೇಶವನ್ನು ಸಾರುವುದಕ್ಕೇ ಎಂದು ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಬೋಧಕನನ್ನಾಗಿಯೂ ನೇಮಿಸಿದ್ದಾರೆ.</verse>
				<verse number="12">ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.</verse>
				<verse number="13">ಕ್ರಿಸ್ತಯೇಸುವಿನಲ್ಲಿ ನಮ್ಮದಾಗಿರುವ ವಿಶ್ವಾಸ ಹಾಗೂ ಪ್ರೀತಿಯಲ್ಲಿ ನೀನು ನೆಲೆಗೊಂಡಿರು. ನಾನು ಬೋಧಿಸಿದ್ದನ್ನು ಆದರ್ಶವಾಗಿಟ್ಟುಕೊಂಡು ಅನುಸರಿಸು.</verse>
				<verse number="14">ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ನಮ್ಮಲ್ಲಿ ವಾಸಿಸುವ ಪವಿತ್ರಾತ್ಮರ ಸಹಾಯದಿಂದ ಸುರಕ್ಷಿತವಾಗಿಡು.</verse>
				<verse number="15">ಏಷ್ಯಾ ಪ್ರಾಂತ್ಯದವರೆಲ್ಲ ನನ್ನನ್ನು ಕೈಬಿಟ್ಟುಹೋದರೆಂದು ನೀನು ಬಲ್ಲೆ. ಅವರೊಡನೆ ಫುಗೇಲನೂ ಹೆರ್ಮೊಗೇನನೂ ಸಹ ಹೊರಟುಹೋದರು.</verse>
				<verse number="16">ಒನೇಸಿಫೊರನ ಕುಟುಂಬವನ್ನು ಪ್ರಭು ಆಶೀರ್ವದಿಸಲಿ. ಆತನು ಅನೇಕ ಸಾರಿ ನನ್ನನ್ನು ಆದರಿಸಿದನು.</verse>
				<verse number="17">ನಾನು ಸೆರೆಯಾಳಾಗಿದ್ದರೂ ನಾಚಿಕೆಪಡದೆ ತಾನು ರೋಮ್ ನಗರಕ್ಕೆ ಬಂದ ಕೂಡಲೇ ನನ್ನನ್ನು ಎಲ್ಲೆಡೆಗಳಲ್ಲೂ ಹುಡುಕಿ ಕಂಡುಹಿಡಿದನು.</verse>
				<verse number="18">ಅಂತಿಮ ದಿನದಂದು ಪ್ರಭು ಯೇಸು ಆತನಿಗೆ ಕರುಣೆತೋರಲಿ. ನಾನು ಏಷ್ಯಾದಲ್ಲಿದ್ದಾಗ ಆತನು ನನಗೆ ಎಷ್ಟೊಂದು ನೆರವು ನೀಡಿದನೆಂದು ನಿನಗೆ ಚೆನ್ನಾಗಿ ತಿಳಿದಿದೆ.</verse>
			</chapter>
			<chapter number="2">
				<verse number="1">ಪ್ರಿಯ ಪುತ್ರನೇ, ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅನುಗ್ರಹದಲ್ಲಿ ನೀನು ದೃಢನಾಗಿರು.</verse>
				<verse number="2">ಹಲವರ ಮುಂದೆ ನಾನು ಮಾಡಿದ ಉಪದೇಶವನ್ನು ನೀನೇ ಕೇಳಿದ್ದೀ. ಅದೇ ಉಪದೇಶವನ್ನು ಇತರರಿಗೂ ಬೋಧಿಸಲು ಪ್ರಾಮಾಣಿಕ ವ್ಯಕ್ತಿಗಳನ್ನು ನೇಮಿಸು.</verse>
				<verse number="3">ಕ್ರಿಸ್ತಯೇಸುವಿನ ನಿಷ್ಠಾವಂತ ಸೈನಿಕನಂತೆ ಕಷ್ಟದುಃಖಗಳನ್ನು ತಾಳ್ಮೆಯಿಂದ ಸಹಿಸಿಕೋ.</verse>
				<verse number="4">ಯುದ್ಧಕ್ಕೆ ಹೋಗುವ ಯಾವ ಸೈನಿಕನೂ ಲೋಕವ್ಯವಹಾರಗಳಲ್ಲಿ ಸಿಕ್ಕಿಕೊಳ್ಳನು. ಏಕೆಂದರೆ, ತನ್ನನ್ನು ಸೈನ್ಯಕ್ಕೆ ಸೇರಿಸಿಕೊಂಡವನನ್ನು ಮೆಚ್ಚಿಸಲು ಅವನು ಪ್ರಯತ್ನಿಸುತ್ತಾನೆ.</verse>
				<verse number="5">ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟು ಅದರ ನಿಯಮಗಳನ್ನು ಪಾಲಿಸದಿದ್ದರೆ ಬಹುಮಾನ ಗಳಿಸಲು ಸಾಧ್ಯವಿಲ್ಲ.</verse>
				<verse number="6">ವ್ಯವಸಾಯದ ಹುಟ್ಟುವಳಿಯಲ್ಲಿ ಮೊತ್ತಮೊದಲನೆಯ ಪಾಲು ಕಷ್ಟಪಟ್ಟ ರೈತನಿಗಲ್ಲವೇ?</verse>
				<verse number="7">ನಾನು ಹೇಳುತ್ತಿರುವುದನ್ನು ಆಲೋಚಿಸಿ ನೋಡು; ಇದೆಲ್ಲವನ್ನು ಚೆನ್ನಾಗಿ ಗ್ರಹಿಸಲು ಪ್ರಭು ನಿನಗೆ ನೆರವಾಗುವರು.</verse>
				<verse number="8">ಕ್ರಿಸ್ತಯೇಸುವನ್ನು ಸ್ಮರಿಸಿಕೋ. ದಾವೀದನ ವಂಶಸ್ಥರಾದ ಅವರು ಮೃತರಾಗಿ ಪುನರುತ್ಥಾನರಾದರು. ಇದೇ ನಾನು ಸಾರುವ ಶುಭಸಂದೇಶ. ಇದನ್ನು ಸಾರಿದ್ದರಿಂದಲೇ ನಾನು ಕಷ್ಟಗಳಿಗೆ ಈಡಾಗಿದ್ದೇನೆ; ಪಾತಕಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯವನ್ನು ಯಾರೂ ಬಂಧಿಸುವಂತಿಲ್ಲ.</verse>
				<verse number="9"></verse>
				<verse number="10">ದೇವರಿಂದ ಆಯ್ಕೆಯಾದ ಪ್ರಜೆಗಳು ಪ್ರಭು ಯೇಸುವಿನಲ್ಲಿ ಲಭಿಸುವ ಜೀವೋದ್ಧಾರವನ್ನೂ ಅನಂತಮಹಿಮೆಯನ್ನೂ ನನ್ನೊಂದಿಗೆ ಪಡೆಯಲೆಂದು ನಾನು ಇದೆಲ್ಲವನ್ನೂ ಅವರಿಗಾಗಿ ಸಹಿಸುತ್ತಿದ್ದೇನೆ.</verse>
				<verse number="11">ಈ ಮಾತು ನಂಬತಕ್ಕದ್ದಾಗಿದೆ:</verse>
				<verse number="12">ನಾವು ಆತನೊಡನೆ ಸತ್ತಿದ್ದರೆ, ಆತನೊಡನೆ ಜೀವಿಸುತ್ತೇವೆ; ಸೈರಣೆಯುಳ್ಳವರು ನಾವಾದರೆ, ಆತನೊಡನೆ ರಾಜ್ಯವಾಳುತ್ತೇವೆ; ನಾವಾತನನು ನಿರಾಕರಿಸಿದರೆ, ನಮ್ಮನ್ನಾತನು ನಿರಾಕರಿಸುತ್ತಾನೆ.</verse>
				<verse number="13">ನಾವು ವಿಶ್ವಾಸಭ್ರಷ್ಟರಾದರೂ ವಿಶ್ವಾಸಪಾತ್ರನಾತ; ಕಾರಣ, ತನ್ನ ಸ್ವಭಾವಕ್ಕೆ ವಿರುದ್ಧ ವರ್ತಿಸನಾತ.</verse>
				<verse number="14">ಈ ವಿಷಯಗಳನ್ನು ನಿನ್ನ ಸಭೆಯವರಿಗೆ ಜ್ಞಾಪಕಪಡಿಸು. ವ್ಯರ್ಥವಾದ ವಾಗ್ವಾದಗಳನ್ನು ನಿಲ್ಲಿಸಬೇಕೆಂದು ಅವರನ್ನು ದೇವರ ಮುಂದೆ ಖಂಡಿತವಾಗಿ ಎಚ್ಚರಿಸು. ಇಂಥ ವಾಗ್ವಾದಗಳಿಂದ ಕೇಳುವವರಿಗೆ ಕೇಡಾಗುವುದೇ ಹೊರತು ಒಳಿತೇನೂ ಆಗದು.</verse>
				<verse number="15">ನೀನಾದರೋ ದೇವರಿಗೆ ಮೆಚ್ಚುಗೆಯಾದವನಂತೆ, ತನ್ನ ಕೆಲಸಕ್ಕೆ ಹಿಂದೆಗೆಯದ ಕೆಲಸಗಾರನಂತೆ, ಸುವಾರ್ತೆಯನ್ನು ಸರಿಯಾಗಿ ಸಾರುವವನಂತೆ, ಸುವಾರ್ತೆಯನ್ನು ಸರಿಯಾಗಿ ಸಾರುವವನಂತೆ ಬಾಳಲು ಪ್ರಯತ್ನಪಡು.</verse>
				<verse number="16">ಪ್ರಾಪಂಚಿಕ ಹರಟೆಗಳಿಂದ ದೂರವಿರು. ಅವುಗಳಲ್ಲಿ ಕಾಲಹರಣ ಮಾಡುವವರು ದೇವರಿಂದ ದೂರಸರಿಯುತ್ತಾರೆ.</verse>
				<verse number="17">ಅವರ ಮಾತು ರಾಜ ಹುಣ್ಣಿನಂತೆ ಹರಡಿಕೊಳ್ಳುತ್ತದೆ. ಹುಮೆನಾಯ ಮತ್ತು ಫಿಲೇತ ಇಂಥವರ ಗುಂಪಿಗೆ ಸೇರಿದ್ದಾರೆ.</verse>
				<verse number="18">ಇವರು ಸತ್ಯಮಾರ್ಗವನ್ನು ತ್ಯಜಿಸಿದ್ದಾರಲ್ಲದೆ ನಮ್ಮ ಪುನರುತ್ಥಾನವು ಈಗಾಗಲೇ ಮುಗಿದುಹೋಗಿದೆಯೆಂದು ಹೇಳುತ್ತಾ ಕೆಲವರ ವಿಶ್ವಾಸವನ್ನು ಕೆಡಿಸುತ್ತಿದ್ದಾರೆ.</verse>
				<verse number="19">ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ.</verse>
				<verse number="20">ದೊಡ್ಡ ಮನೆಯಲ್ಲಿ ಬೆಳ್ಳಿಬಂಗಾರದ ಪಾತ್ರೆಗಳಲ್ಲದೆ ಮರದ ಹಾಗೂ ಮಣ್ಣಿನ ಪಾತ್ರೆಗಳೂ ಇರುತ್ತವೆ. ಇವುಗಳಲ್ಲಿ ಕೆಲವು ಉತ್ತಮ ಬಳಕೆಗೂ ಇನ್ನೂ ಕೆಲವು ಸಾಮಾನ್ಯ ಬಳಕೆಗೂ ಬರುವುದುಂಟು.</verse>
				<verse number="21">ಹೀಗಿರಲಾಗಿ, ಒಬ್ಬನು ಕೀಳುತನದಿಂದ ತನ್ನನ್ನು ತಾನೇ ಶುದ್ಧೀಕರಿಸಿಕೊಂಡರೆ, ಅವನು ಉತ್ತಮ ಬಳಕೆಗೆ ಯೋಗ್ಯನಾಗುತ್ತಾನೆ. ಅಂಥವನು ದೇವರ ಸೇವೆಗೆ ಮೀಸಲಾಗುತ್ತಾನೆ. ಸತ್ಕಾರ್ಯಗಳನ್ನು ಕೈಗೊಳ್ಳಲು ಸಿದ್ಧನಾಗಿರುತ್ತಾನೆ.</verse>
				<verse number="22">ನೀನು ಯೌವನದ ಭಾವೋದ್ರೇಕಗಳಿಗೆ ತುತ್ತಾಗದೆ ಧರ್ಮ, ವಿಶ್ವಾಸ, ಪ್ರೀತಿ ಮತ್ತು ಶಾಂತಿ - ಇವುಗಳನ್ನು ರೂಢಿಸಿಕೋ. ಈ ದಿಸೆಯಲ್ಲಿ ಶುದ್ಧ ಹೃದಯದಿಂದ ದೇವರನ್ನು ಅರಸುವವನು ನಿನಗೆ ಆದರ್ಶವಾಗಿರಲಿ.</verse>
				<verse number="23">ಮೂರ್ಖ ಹಾಗೂ ಅನರ್ಥ ವಾಗ್ವಾದಗಳು ಜಗಳಕ್ಕೆ ಕಾರಣಗಳು. ಅವುಗಳ ಗೊಡವೆ ನಿನಗೆ ಬೇಡ.</verse>
				<verse number="24">ಪ್ರಭುವಿನ ಶರಣನಿಗೆ ಜಗಳ ಸಲ್ಲದು. ಆತನು ಎಲ್ಲರೊಡನೆ ಸೌಹಾರ್ದದಿಂದ ನಡೆದುಕೊಳ್ಳಬೇಕು.</verse>
				<verse number="25">ಬೋಧನೆಯಲ್ಲಿ ಪ್ರವೀಣನೂ ಕೇಡನ್ನು ಸಹಿಸದವನೂ ವಿರೋಧಿಗಳನ್ನು ತಾಳ್ಮೆಯಿಂದ ತಿದ್ದುವವನೂ ಆಗಿರಬೇಕು. ಆ ವಿರೋಧಿಗಳು ಪಶ್ಚಾತ್ತಾಪಪಟ್ಟು ಸನ್ಮಾರ್ಗವನ್ನು ಹಿಡಿಯುವಂತೆ ದೇವರು ಅವರಿಗೆ ಅನುಗ್ರಹಿಸಬಹುದು.</verse>
				<verse number="26">ಸೈತಾನನ ಬಲೆಯಲ್ಲಿ ಸಿಕ್ಕಿಕೊಂಡು ಅವನ ಇಚ್ಛಾನುಸಾರ ನಡೆಯುವವರು ಹೀಗೆ ಬಿಡುಗಡೆಹೊಂದಲು ಸಾಧ್ಯವಾಗಬಹುದು.</verse>
			</chapter>
			<chapter number="3">
				<verse number="1">ಅಂತಿಮ ದಿನಗಳು ಕಷ್ಟಕರವಾದ ಕಾಲವಾಗಿರುತ್ತದೆಂಬುದನ್ನು ಜ್ಞಾಪಕದಲ್ಲಿಡು.</verse>
				<verse number="2">ಜನರು ಸ್ವಾರ್ಥಚಿಂತಕರೂ ಲೋಭಿಗಳೂ ಅಹಂಕಾರಿಗಳೂ ಬಡಾಯಿಕೋರರೂ ದೇವದೂಷಕರೂ ಹೆತ್ತವರಿಗೆ ಅವಿಧೇಯರೂ ಕೃತಘ್ನರೂ ಭಕ್ತಿಹೀನರೂ ಆಗುವರು.</verse>
				<verse number="3">ಅವರು ಮಮತೆ ಇಲ್ಲದವರೂ ಸಮಾಧಾನ ಸಹಿಸದವರೂ ಚಾಡಿಕೋರರೂ ಸ್ವೇಚ್ಛಾವರ್ತಿಗಳೂ ಕ್ರೂರಿಗಳೂ ಒಳಿತನ್ನು ದ್ವೇಷಿಸುವವರೂ ಆಗುವರು.</verse>
				<verse number="4">ನಂಬಿಕೆದ್ರೋಹಿಗಳೂ ದುಡುಕುವವರೂ ಮಹಾಗರ್ವಿಗಳೂ ಆಗುವರು. ದೇವರನ್ನು ಅರಸದೆ ಭೋಗಗಳನ್ನೇ ಬಯಸುವರು.</verse>
				<verse number="5">ಅವರು ಭಕ್ತಿಯ ವೇಷ ಧರಿಸಿದ್ದರೂ ಅದರ ನಿಜವಾದ ಶಕ್ತಿಯನ್ನು ಅಲ್ಲಗಳೆಯುವರು. ಇಂಥವರ ಸಹವಾಸ ನಿನಗೆ ಬೇಡ.</verse>
				<verse number="6">ಇವರಲ್ಲಿ ಕೆಲವರು ಮನೆಮನೆಗಳಿಗೆ ನುಸಳಿ ನಾನಾ ಪಾಪಗಳಿಂದಲೂ ಕಾಮನೆಗಳಿಂದಲೂ ಕೂಡಿರುವ ಮತಿಗೆಟ್ಟ ಮಹಿಳೆಯರನ್ನು ವಶಪಡಿಸಿಕೊಳ್ಳುವರು.</verse>
				<verse number="7">ಆ ಮಹಿಳೆಯರಾದರೋ ಯಾರಿಗೆ ಬೇಕಾದರೂ ಕಿವಿಗೊಡುವರು. ಸತ್ಯವನ್ನು ಮಾತ್ರ ಮನಗಾಣರು.</verse>
				<verse number="8">ಯನ್ನ ಮತ್ತು ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆ, ಇವರು ಸತ್ಯವನ್ನು ಪ್ರತಿಭಟಿಸುತ್ತಾರೆ.</verse>
				<verse number="9">ದುರ್ಮತಿಗಳೂ ವಿಶ್ವಾಸಭ್ರಷ್ಟರೂ ಆಗಿದ್ದಾರೆ. ಆದರೆ ಅವರ ಮೂರ್ಖತನ ದೀರ್ಘಕಾಲ ಬಾಳದು. ಯನ್ನ ಮತ್ತು ಯಂಬ್ರಳ ದೋಷದಂತೆ ಅದು ಸರ್ವರಿಗೂ ಬಟ್ಟಬಯಲಾಗುತ್ತದೆ.</verse>
				<verse number="10">ನೀನಾದರೋ ನನ್ನ ಬೋಧನೆ, ನಡತೆ ಹಾಗೂ ಧ್ಯೇಯಗಳನ್ನು ಅರಿತಿರುವೆ. ನನ್ನ ವಿಶ್ವಾಸ, ಸಹಿಷ್ಣುತೆ ಮತ್ತು ಸೈರಣೆ ನಿನಗೆ ತಿಳಿದಿದೆ.</verse>
				<verse number="11">ನಾನು ಅನುಭವಿಸಿದ ಹಿಂಸೆನೋವುಗಳ ಮತ್ತು ಕಷ್ಟದುಃಖಗಳ ಕುರಿತು ಕೇಳಿರುವೆ. ಅಂತಿಯೋಕ್ಯ, ಇಕೋನಿಯ ಮತ್ತು ಲುಸ್ತ್ರ ಪಟ್ಟಣಗಳಲ್ಲಿ ನಾನು ಎಂಥ ಕ್ರೂರವಾದ ಹಿಂಸೆ ಅನುಭವಿಸಿದೆನೆಂಬುದು ನಿನಗೆ ತಿಳಿಯದ ವಿಷಯವೇನೂ ಅಲ್ಲ. ಆದರೆ ಪ್ರಭು ನನ್ನನ್ನು ಇವೆಲ್ಲವುಗಳಿಂದ ಪಾರುಮಾಡಿದರು.</verse>
				<verse number="12">ಕ್ರಿಸ್ತಯೇಸುವಿನ ಅನುಯಾಯಿಯಾಗಿ ಭಕ್ತಿಯಿಂದ ಬಾಳಲು ಆಶಿಸುವ ಪ್ರತಿಯೊಬ್ಬನೂ ಹಿಂಸೆಗೊಳಗಾಗುತ್ತಾನೆ.</verse>
				<verse number="13">ದುಷ್ಕರ್ಮಿಗಳು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನೇದಿನೇ ಅಧೋಗತಿಗಿಳಿಯುತ್ತಾರೆ.</verse>
				<verse number="14">ನೀನಾದರೋ ನಿನಗೆ ಬೋಧಿಸಲಾಗಿರುವ ಹಾಗೂ ನೀನು ದೃಢವಾಗಿ ನಂಬಿರುವ ಸತ್ಯಗಳನ್ನು ಅನುಸರಿಸು.</verse>
				<verse number="15">ನಿನ್ನ ಬೋಧಕರು ಯಾರೆಂಬುದು ನಿನಗೆ ಗೊತ್ತಿದೆ. ಚಿಕ್ಕಂದಿನಿಂದಲೇ ನೀನು ಪವಿತ್ರಗ್ರಂಥವನ್ನು ಪರಿಚಯಮಾಡಿಕೊಂಡಿರುವೆ. ಯೇಸುಕ್ರಿಸ್ತರನ್ನು ವಿಶ್ವಾಸಿಸುವುದರ ಮೂಲಕ ಜೀವೋದ್ಧಾರವನ್ನು ಪಡೆಯಬಹುದೆಂಬ ಜ್ಞಾನವು ಲಭಿಸುವುದು ಆ ಪವಿತ್ರಗ್ರಂಥದಿಂದಲೇ.</verse>
				<verse number="16">ಪವಿತ್ರಗ್ರಂಥ ದೈವಪ್ರೇರಣೆಯಿಂದ ರಚಿತವಾದುದು. ಆದ್ದರಿಂದ ಅದು ಪ್ರಬೋಧನೆಗೂ ಖಂಡನೆಗೂ ತಿದ್ದುಪಾಟಿಗೂ ನೀತಿಬೋಧೆಗೂ ಉಪಯುಕ್ತವಾಗಿದೆ.</verse>
				<verse number="17">ಅದರ ಮೂಲಕ ದೈವಭಕ್ತರು ಸಿದ್ಧರೂ ಸಕಲ ಸತ್ಕಾರ್ಯಗಳಿಗೆ ಸನ್ನದ್ಧರೂ ಆಗಬಲ್ಲರು.</verse>
			</chapter>
			<chapter number="4">
				<verse number="1">ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ ಆಜ್ಞಾಪಿಸುವುದೇನೆಂದರೆ:</verse>
				<verse number="2">ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.</verse>
				<verse number="3">ಜನರು ಸದ್ಬೋಧನೆಯನ್ನು ಸಹಿಸದೆ, ಸ್ವೇಚ್ಛಾಚಾರಿಗಳಾಗುವ ಕಾಲವು ಬರುತ್ತದೆ. ತಮ್ಮ ದುರಿಚ್ಛೆಗಳಿಗೆ ಅನುಗುಣವಾಗಿ ಬೋಧಿಸುವವರಿಗೆ ಕಾತರದಿಂದ ಕಿವಿಗೊಡಲು ಕೂಡಿಕೊಳ್ಳುತ್ತಾರೆ.</verse>
				<verse number="4">ಸತ್ಯಕ್ಕೆಕಿವಿಗೊಡದೆ ಕಟ್ಟುಕತೆಗಳನ್ನು ಕೇಳಲು ಅಲೆದಾಡುತ್ತಾರೆ.</verse>
				<verse number="5">ಆದರೆ, ನೀನು ಎಲ್ಲ ಸನ್ನಿವೇಶಗಳಲ್ಲೂ ಸ್ಥಿರಚಿತ್ತದಿಂದಿರು. ಕಷ್ಟವನ್ನು ಸಹಿಸಿಕೋ. ಶುಭಸಂದೇಶವನ್ನು ನಿಷ್ಠೆಯಿಂದ ಸಾರು. ನಿನ್ನ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸು.</verse>
				<verse number="6">ನಾನು ಯಜ್ಞಪಶುವಾಗಿ ಅರ್ಪಿತನಾಗುವ ಸಮಯವು ಬಂದಿದೆ. ಈ ಲೋಕದಿಂದ ತೆರಳಬೇಕಾದ ಕಾಲವೂ ಕೂಡಿಬಂದಿದೆ.</verse>
				<verse number="7">ಬಾಳಿನ ಸ್ಪರ್ಧೆಯಲ್ಲಿ ಭಾಗವಹಿಸಿದ್ದೇನೆ. ನನ್ನ ಓಟವನ್ನು ಮುಗಿಸಿದ್ದೇನೆ. ವಿಶ್ವಾಸವನ್ನು ಕಾಪಾಡಿಕೊಂಡಿದ್ದೇನೆ.</verse>
				<verse number="8">ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.</verse>
				<verse number="9">ನನ್ನ ಬಳಿಗೆ ಸಾಧ್ಯವಾದಷ್ಟು ಬೇಗನೆ ಬರುವುದಕ್ಕೆ ಪ್ರಯತ್ನಿಸು.</verse>
				<verse number="10">ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ.</verse>
				<verse number="11">ಲೂಕನು ಮಾತ್ರ ನನ್ನ ಜೊತೆಯಿದ್ದಾನೆ, ನೀನು ಬರುವಾಗ ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ. ಅವನ ಸೇವೆ ನನಗೆ ಅಗತ್ಯವಾಗಿದೆ.</verse>
				<verse number="12">ತುಖಿಕನನ್ನು ನಾನು ಎಫೆಸಕ್ಕೆ ಕಳುಹಿಸಿದ್ದೇನೆ.</verse>
				<verse number="13">ನೀನು ಬರುವಾಗ ತ್ರೋವದಲ್ಲಿ ನಾನು ಕರ್ಪನ ಬಳಿ ಬಿಟ್ಟುಬಂದ ನನ್ನ ಮೇಲಂಗಿಯನ್ನು ತೆಗೆದುಕೊಂಡು ಬಾ. ನನ್ನ ಕೆಲವು ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಸುರುಳಿಗಳನ್ನೂ ತಪ್ಪದೆ ತೆಗೆದುಕೊಂಡು ಬಾ.</verse>
				<verse number="14">ಕಂಚುಗಾರನಾದ ಅಲೆಗ್ಸಾಂಡರನು ನನಗೆ ಬಹಳ ಕೇಡುಮಾಡಿದ್ದಾನೆ. ಪ್ರಭು ಅವನ ಕೃತ್ಯಗಳಿಗೆ ತಕ್ಕ ಶಿಕ್ಷೆಯನ್ನು ವಿಧಿಸುವರು.</verse>
				<verse number="15">ನೀನು ಅವನ ವಿಷಯದಲ್ಲಿ ಎಚ್ಚರಿಕೆಯಿಂದಿರು. ನಮ್ಮ ಬೋಧನೆಗೆ ಅವನು ಕಟುವಾದ ವಿರೋಧಿ ಆಗಿದ್ದಾನೆ.</verse>
				<verse number="16">ನಾನು ಮೊದಲನೆಯ ಸಾರಿ ವಿಚಾರಣೆಗೆ ಒಳಗಾಗಿ ಪ್ರತಿವಾದಿಸುತ್ತಿದ್ದಾಗ ಯಾರೂ ನನ್ನ ಪರವಾಗಿ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ದೇವರು ಅವರನ್ನು ಕ್ಷಮಿಸಲಿ.</verse>
				<verse number="17">ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.</verse>
				<verse number="18">ಪ್ರಭು ನನ್ನನ್ನು ಸಕಲ ಕೇಡುಗಳಿಂದ ರಕ್ಷಿಸಿ, ತಮ್ಮ ಸ್ವರ್ಗಸಾಮ್ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ಸೇರಿಸುವರು. ಯುಗಯುಗಾಂತರಕ್ಕೂ ಅವರಿಗೆ ಮಹಿಮೆ ಸಲ್ಲಲಿ, ಆಮೆನ್.</verse>
				<verse number="19">ಪ್ರಿಸ್ಕಳಿಗೂ ಅಕ್ವಿಲನಿಗೂ ಒನೇಸಿಫೊರನ ಮನೆಯವರಿಗೂ ನನ್ನ ಶುಭಾಶಯಗಳನ್ನು ತಿಳಿಸು.</verse>
				<verse number="20">ಎರಸ್ತನು ಕೊರಿಂಥದಲ್ಲಿ ಉಳಿದುಕೊಂಡಿದ್ದಾನೆ. ತ್ರೊಫಿಮನನ್ನು ಅನಾರೋಗ್ಯದ ನಿಮಿತ್ತ ಮಿಲೇತದಲ್ಲಿಯೇ ಬಿಟ್ಟಿದ್ದೇನೆ.</verse>
				<verse number="21">ಚಳಿಗಾಲಕ್ಕೆ ಮೊದಲೇ ಇಲ್ಲಿಗೆ ಬರಲು ಪ್ರಯತ್ನಿಸು. ಯುಬೂಲ, ಫುದೇಯ, ಲೀನ, ಕ್ಲೌದ್ಯ ಇವರು ಮತ್ತು ಇತರ ಸಹೋದರರು ನಿನಗೆ ಶುಭಾಶಯಗಳನ್ನು ಕಳುಹಿಸಿದ್ದಾರೆ.</verse>
				<verse number="22">ಪ್ರಭು ನಿನ್ನೊಂದಿಗಿರಲಿ, ದೇವರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!</verse>
			</chapter>
		</book>
		<book number="56">
			<chapter number="1">
				<verse number="1">ಕ್ರಿಸ್ತವಿಶ್ವಾಸದಲ್ಲಿ ಪುತ್ರನಾಗಿರುವ ತೀತನಿಗೆ - ದೇವರ ದಾಸನೂ ಯೇಸುಕ್ರಿಸ್ತರ ಪ್ರೇಷಿತನೂ ಆದ ಪೌಲನು ಬರೆಯುವ ಪತ್ರ.ತಂದೆಯಾದ ದೇವರೂ ನಮ್ಮ ಉದ್ಧಾರಕರಾದ ಯೇಸುಕ್ರಿಸ್ತರೂ ನಿನಗೆ ಕೃಪಾಶೀರ್ವಾದವನ್ನೂ‍ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ! ದೇವರು, ತಾವು ಆರಿಸಿಕೊಂಡಿರುವ ಜನರ ವಿಶ್ವಾಸವನ್ನು ದೃಢಪಡಿಸಲು ಮತ್ತು ಭಕ್ತಿಯನ್ನು ವೃದ್ಧಿಗೊಳಿಸಿ ಅಮರಜೀವದತ್ತ ಕರೆದೊಯ್ಯುವ ಸತ್ಯಗಳನ್ನು ಅವರಿಗೆ ಬೋಧಿಸಲು ನನ್ನನ್ನು ನೇಮಿಸಿದ್ದಾರೆ. ಈ ಅಮರ ಜೀವವನ್ನು ಕೊಡುವುದಾಗಿ ಸತ್ಯಪರರಾದ ದೇವರು ಆದಿಯಿಂದಲೂ ನಮಗೆ ವಾಗ್ದಾನಮಾಡಿದ್ದರು. ಸೂಕ್ತಕಾಲವು ಬಂದಾಗ ಈ ವಾಗ್ದಾನವನ್ನು ಈಡೇರಿಸಿ ತಮ್ಮ ಸಂದೇಶವನ್ನು ಪ್ರಕಟಿಸಿದರು. ನನಗೊಪ್ಪಿಸಿರುವ ಈ ಸಂದೇಶವನ್ನು ಜಗದ್ರಕ್ಷಕರಾದ ದೇವರ ಆಜ್ಞಾನುಸಾರ ನಾನು ಸಾರುತ್ತಿದ್ದೇನೆ.</verse>
				<verse number="2"></verse>
				<verse number="3"></verse>
				<verse number="4"></verse>
				<verse number="5">ನೀನು ಕ್ರೇಟ್ ದ್ವೀಪದಲ್ಲಿ ಇನ್ನೂ ಸರಿಪಡಿಸಬೇಕಾದ ಕೆಲಸಗಳನ್ನು ಕ್ರಮಪಡಿಸಿ, ಅಲ್ಲಿಯ ಪ್ರತಿಯೊಂದು ಪಟ್ಟಣಕ್ಕೂ ಸಭೆಯ ಹಿರಿಯರನ್ನು ನೇಮಿಸಬೇಕೆಂದು ನಿನ್ನನ್ನು ಅಲ್ಲೇ ಬಿಟ್ಟು ಬಂದೆ.</verse>
				<verse number="6">ನಾನು ಕೊಟ್ಟ ಸಲಹೆಗಳನ್ನು ಜ್ಞಾಪಿಸಿಕೋ; ಸಭಾಹಿರಿಯನು ನಿಂದಾರಹಿತನೂ ಏಕಪತ್ನಿ ವ್ರತಸ್ಥನೂ ಆಗಿರಬೇಕು. ಆತನ ಮಕ್ಕಳು ವಿಶ್ವಾಸಿಗಳಾಗಿರಬೇಕು. ಅವರು ಸ್ವೇಚ್ಛಾಚಾರಿಗಳಾಗಿರಬಾರದು, ಅವಿಧೇಯರಾಗಿರಬಾರದು.</verse>
				<verse number="7">ಏಕೆಂದರೆ, ಸಭಾಧ್ಯಕ್ಷನು ದೇವರ ಸೇವೆಯಲ್ಲಿ ಮೇಲ್ವಿಚಾರಕನಾಗಿರುವುದರಿಂದ ನಿಂದಾರಹಿತನಾಗಿರಬೇಕು. ಆತನು ಗರ್ವಿ ಅಥವಾ ಮುಂಗೋಪಿಯಾಗಿರಬಾರದು. ಕುಡಿತವಾಗಲಿ, ಹಿಂಸಾಚಾರವಾಗಲಿ, ಹಿಂಸಾಪ್ರವೃತ್ತಿಯಾಗಲಿ ಅವನಲ್ಲಿರಬಾರದು. ಅವನು ಲಾಭಕೋರನಾಗಿರಬಾರದು.</verse>
				<verse number="8">ಅತಿಥಿ ಸತ್ಕಾರ ಮಾಡುವವನೂ ಒಳ್ಳೆಯದನ್ನು ಪ್ರೀತಿಸುವವನೂ ಆಗಿರಬೇಕು. ಇಂಥವನು ಸ್ವಸ್ಥಚಿತ್ತನೂ ನೀತಿವಂತನೂ ಸದ್ಭಕ್ತನೂ ಆತ್ಮಸಂಯಮವುಳ್ಳವನೂ ಆಗಿರಬೇಕು.</verse>
				<verse number="9">ವಿಶ್ವಾಸಿಸಲು ಯೋಗ್ಯವಾದ ಹಾಗೂ ಕ್ರೈಸ್ತತತ್ವಗಳಿಗೆ ಅನುಗುಣವಾದ ಸಿದ್ಧಾಂತಗಳನ್ನು ಅವನು ಭದ್ರವಾಗಿ ಹಿಡಿದವನಾಗಿರಬೇಕು. ಆಗ ಸದ್ಬೋಧನೆಯಿಂದ ಇತರರನ್ನು ಪ್ರೋತ್ಸಾಹಿಸುವುದಕ್ಕೂ ಅದಕ್ಕೆ ವ್ಯತಿರಿಕ್ತವಾಗಿ ನಡೆಯುವವರ ತಪ್ಪುಗಳನ್ನು ಎತ್ತಿತೋರಿಸುವುದಕ್ಕೂ ಆತನು ಸಮರ್ಥನಾಗುತ್ತಾನೆ.</verse>
				<verse number="10">ಇತ್ತೀಚೆಗೆ ಅವಿಧೇಯರು, ಜೊಳ್ಳು ಮಾತಿನವರು ಹಾಗೂ ವಂಚಕಬೋಧಕರು ತಲೆ ಎತ್ತಿದ್ದಾರೆ. ಅವರಲ್ಲಿ ಕ್ರೈಸ್ತರಾಗಿರುವ ಯೆಹೂದ್ಯರು ಸಾಕಷ್ಟು ಮಂದಿ ಇದ್ದಾರೆ.</verse>
				<verse number="11">ಇವರ ಬಾಯಿ ಮುಚ್ಚಿಸಬೇಕಾಗಿದೆ. ಏಕೆಂದರೆ, ಇವರು ಹಣಸಂಪಾದನೆಯ ದುರುದ್ದೇಶದಿಂದ ಮಾಡಬಾರದ ಬೋಧನೆಯನ್ನು ಮಾಡಿ ಅನೇಕ ಕುಟುಂಬಗಳನ್ನು ಹಾಳುಮಾಡುತ್ತಿದ್ದಾರೆ.</verse>
				<verse number="12">ಕ್ರೇಟ್‍ನವನೇ ಆದ ಅವರ ಪ್ರವಾದಿಯೊಬ್ಬನು ಸ್ವಜನರ ವಿಷಯವಾಗಿ ಹೀಗೆಂದಿದ್ದಾನೆ: ‘ಕ್ರೇಟ್ ನಿವಾಸಿಗಳು ಸದಾ ಸುಳ್ಳುಗಾರರು, ದುಷ್ಟಮೃಗಗಳು, ಸೋಮಾರಿಗಳು ಮತ್ತು ಹೊಟ್ಟೆಬಾಕರು’ - ಈ ಮಾತು ನಿಜವಾದುದು.</verse>
				<verse number="13"></verse>
				<verse number="14">ಆದ್ದರಿಂದ ಯೆಹೂದ್ಯರ ಕಟ್ಟುಕತೆಗಳಿಗೂ ಸತ್ಯಭ್ರಷ್ಟರಾದವರ ವಿಧಿಗಳಿಗೂ ಕಿವಿಗೊಡದಂತೆ ತೀವ್ರವಾಗಿ ಖಂಡಿಸಿ, ವಿಶ್ವಾಸದಲ್ಲಿ ದೃಢವಾಗಿರುವಂತೆ ಭಕ್ತಾದಿಗಳಿಗೆ ಬೋಧಿಸು.</verse>
				<verse number="15">ಮನಃಶುದ್ಧಿಯುಳ್ಳವರಿಗೆ ಎಲ್ಲವೂ ಶುದ್ಧವಾಗಿಯೇ ಇದೆ. ಭ್ರಷ್ಟರಿಗೆ ಮತ್ತು ಅವಿಶ್ವಾಸಿಗಳಿಗೆ ಯಾವುದೂ ಶುದ್ಧವಲ್ಲ. ಏಕೆಂದರೆ, ಅವರ ಮನಸ್ಸೂ ಮನಸ್ಸಾಕ್ಷಿಯೂ ಮಲಿನವಾಗಿದೆ.</verse>
				<verse number="16">ತಾವು ದೇವರನ್ನು ಬಲ್ಲವರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಇಂಥವರು ಅವಿಧೇಯರೂ ಅಸಹ್ಯರೂ ಆಗಿರುವುದರಿಂದ ಯಾವುದೇ ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆ.</verse>
			</chapter>
			<chapter number="2">
				<verse number="1">ನೀನಾದರೋ ಸದ್ಬೋಧನೆಗೆ ತಕ್ಕಂತೆ ಉಪದೇಶಮಾಡು.</verse>
				<verse number="2">ಮದ್ಯಾಸಕ್ತಿ ಇಲ್ಲದೆಯೂ ಗೌರವಾಸಕ್ತರಾಗಿಯೂ ಆತ್ಮಸಂಯಮಿಗಳಾಗಿಯೂ ಇರಬೇಕೆಂದು ವೃದ್ಧರಿಗೆ ಬೋಧಿಸು. ವಿಶ್ವಾಸ, ಪ್ರೀತಿ ಮತ್ತು ತಾಳ್ಮೆ ಅವರ ಮುಖ್ಯ ಗುಣಗಳಾಗಿರಬೇಕು.</verse>
				<verse number="3">ಅಂತೆಯೇ, ವೃದ್ಧ ಸ್ತ್ರೀಯರು ಸಭ್ಯರಾಗಿ ವರ್ತಿಸಬೇಕು, ಅವರು ಚಾಡಿಹೇಳಬಾರದು; ಮದ್ಯಾಸಕ್ತರಾಗಿರಬಾರದು;ಸದ್ಬೋಧಕಿಯರಾಗಿರಬೇಕೆಂದು ವಿಧಿಸು.</verse>
				<verse number="4">ಅವರು ನವಗೃಹಿಣಿಯರಿಗೆ, ತಮ್ಮ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವಂತೆ ಬುದ್ಧಿ ಹೇಳಬೇಕು.</verse>
				<verse number="5">ಗೃಹಿಣಿಯರು, ವಿವೇಕ ಬುದ್ಧಿಯುಳ್ಳವರು, ಪತಿವ್ರತೆಯರು, ಗೃಹಕೃತ್ಯಗಳನ್ನು ಗಮನಿಸುವವರು, ಸುಶೀಲೆಯರು, ಗಂಡಂದಿರಿಗೆ ವಿಧೇಯರು ಆಗಿ ಬಾಳುವುದನ್ನು ವೃದ್ಧಸ್ತ್ರೀಯರಿಂದ ಕಲಿತುಕೊಳ್ಳಲಿ. ಹೀಗೆ, ದೇವರ ವಾಕ್ಯಕ್ಕೆ ಯಾವ ಅಪವಾದವೂ ಬಾರದಂತೆ ಅವರು ನಡೆದುಕೊಳ್ಳಲಿ.</verse>
				<verse number="6">ಹಾಗೆಯೇ, ಯುವಕರು ಎಲ್ಲ ವಿಷಯಗಳಲ್ಲೂ ಜಿತೇಂದ್ರಿಯರಾಗಿರಬೇಕೆಂದು ನೀನು ಎಚ್ಚರಿಸು.</verse>
				<verse number="7">ಸತ್ಕಾರ್ಯಗಳನ್ನು ಮಾಡುವುದರಲ್ಲಿ ನೀನೇ ಮಾದರಿಯಾಗಿರಬೇಕು ಎಂಬುದನ್ನು ಮರೆಯಬೇಡ. ನಿನ್ನ ಬೋಧನೆ ಯಥಾರ್ಥವೂ ಗಂಭೀರವೂ ಕಳಂಕರಹಿತವೂ ಆಗಿರಲಿ. ಆಗ ನಮ್ಮ ವಿರೋಧಿಗಳು ನಮ್ಮಲ್ಲಿ ತಪ್ಪು ಕಂಡುಹಿಡಿಯಲಾಗದೆ ತಾವೇ ಅಪಮಾನಿತರಾಗುತ್ತಾರೆ.</verse>
				<verse number="8"></verse>
				<verse number="9">ಮನೆಯಾಳುಗಳು ತಮ್ಮ ಯಜಮಾನರಿಗೆ ವಿಧೇಯರಾಗಿರಲಿ. ಎಲ್ಲಾ ವಿಷಯಗಳಲ್ಲೂ ಅವರನ್ನು ಮೆಚ್ಚಿಸಲು ಪ್ರಯತ್ನಿಸಲಿ. ಯಜಮಾನರಿಗೆ ಎದುರಾಡುವುದು, ಅವರ ವಸ್ತುಗಳನ್ನು ಕದಿಯುವುದು ಸರಿಯಲ್ಲ.</verse>
				<verse number="10">ಬದಲಿಗೆ, ತಾವು ಒಳ್ಳೆಯವರು ಮತ್ತು ಸ್ವಾಮಿನಿಷ್ಠೆಯುಳ್ಳವರು ಎಂದು ಹೆಸರು ಪಡೆಯಲಿ. ಜಗದ್ರಕ್ಷಕರಾದ ದೇವರ ಉಪದೇಶಕ್ಕೆ ಎಲ್ಲಾ ವಿಧದಲ್ಲೂ ಗೌರವ ತರುವಂತೆ ವರ್ತಿಸಬೇಕೆಂದು ಅವರಿಗೆ ಬೋಧಿಸು.</verse>
				<verse number="11">ಎಲ್ಲಾ ಮಾನವರ ಜೀವೋದ್ಧಾರಕ್ಕಾಗಿಯೇ ದೇವರ ಅನುಗ್ರಹವು ಪ್ರಕಟವಾಗಿದೆ.</verse>
				<verse number="12">ನಾವು ಭಕ್ತಿಹೀನ ನಡತೆಯನ್ನೂ ಪ್ರಾಪಂಚಿಕ ವ್ಯಾಮೋಹಗಳನ್ನೂ ವಿಸರ್ಜಿಸಿ, ಈ ಲೋಕದಲ್ಲಿ ವಿವೇಕಿಗಳಾಗಿಯೂ ಪ್ರಾಮಾಣಿಕರಾಗಿಯೂ ಭಕ್ತರಾಗಿಯೂ ಜೀವಿಸಬೇಕೆಂದು ಅದು ನಮಗೆ ಬೋಧಿಸುತ್ತದೆ. ಅಲ್ಲದೆ, ಮಹೋನ್ನತ ದೇವರು ಮತ್ತು ನಮ್ಮ ಉದ್ಧಾರಕ ಯೇಸುಕ್ರಿಸ್ತರು ಮಹಿಮಾರೂಪದಲ್ಲಿ ನಮಗೆ ಪ್ರತ್ಯಕ್ಷವಾಗುವ ಸೌಭಾಗ್ಯವನ್ನು ನಾವು ಎದುರುನೋಡಬೇಕೆಂದು ಅದು ಕಲಿಸುತ್ತದೆ.</verse>
				<verse number="13"></verse>
				<verse number="14">ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.</verse>
				<verse number="15">ಈ ವಿಷಯಗಳನ್ನು ಅಧಿಕಾರವಾಣಿಯಿಂದ ಬೋಧಿಸು; ಎಚ್ಚರಿಸು. ಅವುಗಳನ್ನು ಕೈಗೊಳ್ಳುವಂತೆ ಪ್ರೋತ್ಸಾಹಿಸು; ಯಾರೂ ನಿನ್ನನ್ನು ತಿರಸ್ಕರಿಸದಂತೆ ಎಚ್ಚರವಹಿಸು.</verse>
			</chapter>
			<chapter number="3">
				<verse number="1">ಆಳುವವರಿಗೂ ಅಧಿಕಾರಿಗಳಿಗೂ ಕ್ರೈಸ್ತವಿಶ್ವಾಸಿಗಳು ವಿಧೇಯರಾಗಿ ನಡೆದುಕೊಳ್ಳಬೇಕೆಂದು ಜ್ಞಾಪಕಪಡಿಸು. ಎಲ್ಲಾ ಸತ್ಕಾರ್ಯಗಳನ್ನು ಕೈಗೊಳ್ಳಲು ಅವರು ಸಿದ್ಧರಿರಬೇಕು.</verse>
				<verse number="2">ಅವರು ಯಾರನ್ನೂ ದೂಷಿಸದೆ, ಯಾರೊಡನೆಯೂ ಜಗಳವಾಡದೆ, ಸಾಧುಗುಣದಿಂದ ಎಲ್ಲರೊಡನೆ ಸೌಜನ್ಯದಿಂದ ನಡೆದುಕೊಳ್ಳಲಿ.</verse>
				<verse number="3">ಹಿಂದೆ ನಾವು ಅವಿವೇಕಿಗಳೂ ಅವಿಧೇಯರೂ ಆಗಿ ದಾರಿ ತಪ್ಪಿಹೋಗಿದ್ದೆವು. ಅನೇಕ ಪ್ರಲೋಭನೆಗಳಿಗೂ ದುರಿಚ್ಛೆಗಳಿಗೂ ಗುಲಾಮರಾಗಿದ್ದೆವು. ದುಷ್ಟತನ ಹಾಗೂ ಮತ್ಸರಗಳಲ್ಲಿ ಕಾಲ ಕಳೆಯುತ್ತಾ ಅಸಹ್ಯರೂ ಪರಸ್ಪರ ದ್ವೇಷಿಗಳೂ ಆಗಿದ್ದೆವು.</verse>
				<verse number="4">ಹೀಗಿರುವಾಗ, ಜಗದ್ರಕ್ಷಕರಾದ ದೇವರ ದಯೆಯೂ ಅವರ ಜನಪ್ರೇಮವೂ ಪ್ರಕಟವಾದವು.</verse>
				<verse number="5">ಆಗ ಅವರೇ ನಮ್ಮನ್ನು ಉದ್ಧರಿಸಿದರು. ನಮ್ಮ ಸ್ವಂತ ಪುಣ್ಯಕಾರ್ಯಗಳು ನಮಗೆ ಈ ಉದ್ಧಾರವನ್ನು ತರಲಿಲ್ಲ. ಪುನರ್ಜನ್ಮವನ್ನು ಸೂಚಿಸುವ ಸ್ನಾನ ಹಾಗೂ ನೂತನ ಜೀವವನ್ನೀಯುವ ಪವಿತ್ರಾತ್ಮ ಈ ಮೂಲಕ ಅವರೇ ನಮ್ಮನ್ನು ಕರುಣೆಯಿಂದ ಉದ್ಧಾರಮಾಡಿದರು.</verse>
				<verse number="6">ಪವಿತ್ರಾತ್ಮರನ್ನು ನಮ್ಮ ಉದ್ಧಾರಕ ಯೇಸುಕ್ರಿಸ್ತರ ಮುಖಾಂತರ ದೇವರು ನಮಗೆ ಧಾರಾಳವಾಗಿ ಅನುಗ್ರಹಿಸಿದ್ದಾರೆ.</verse>
				<verse number="7">ಹೀಗೆ ದೈವಾನುಗ್ರಹದಿಂದ ನಾವು ದೇವರೊಡನೆ ಸತ್ಸಂಬಂಧವನ್ನು ಹೊಂದಿದೆವು. ನಿತ್ಯಜೀವದ ಭರವಸೆಯನ್ನು ಪಡೆದು ಆ ಜೀವಕ್ಕೆ ಬಾಧ್ಯಸ್ಥರಾದೆವು. ಇದು ಸತ್ಯವಾದ ಮಾತು.</verse>
				<verse number="8">ದೇವರಲ್ಲಿ ವಿಶ್ವಾಸವಿಟ್ಟವರು ಸತ್ಕಾರ್ಯಗಳಲ್ಲಿ ನಿರತರಾಗುವಂತೆ ನೀನು ಇವೆಲ್ಲವನ್ನೂ ದೃಢವಾಗಿ ಬೋಧಿಸಬೇಕೆಂಬುದೇ ನನ್ನ ಅಪೇಕ್ಷೆ. ಇವು ಎಲ್ಲರಿಗೂ ಹಿತಕರವಾಗಿವೆ ಹಾಗೂ ಪ್ರಯೋಜನಕರವಾಗಿವೆ.</verse>
				<verse number="9">ಹುರುಳಿಲ್ಲದ ತರ್ಕಗಳಿಂದಲೂ ಉದ್ದುದ್ದ ವಂಶಾವಳಿಗಳಿಂದಲೂ ಕಲಹ ಕಚ್ಚಾಟಗಳಿಂದಲೂ ಧರ್ಮಶಾಸ್ತ್ರವನ್ನು ಕುರಿತಾದ ವಾಗ್ವಾದಗಳಿಂದಲೂ ನೀನು ದೂರವಿರು. ಅವು ನಿಷ್ಪ್ರಯೋಜಕ ಹಾಗೂ ವ್ಯರ್ಥವಾದುವು.</verse>
				<verse number="10">ಕ್ರೈಸ್ತಸಭೆಯಲ್ಲಿ ಭೇದಭಾವ ಹುಟ್ಟಿಸುವವನಿಗೆ ಒಂದೆರಡು ಸಾರಿ ಬುದ್ಧಿಹೇಳು. ಅನಂತರ ಅವನಷ್ಟಕ್ಕೇ ಬಿಟ್ಟುಬಿಡು.</verse>
				<verse number="11">ಅಂಥವನು ಪತಿತ ಹಾಗೂ ಪಾಪಿಯೆಂದು ತಿಳಿ. ಅವನ ದುಷ್ಕೃತ್ಯಗಳೇ ಅವನ ಮೇಲೆ ತೀರ್ಪಿಡುತ್ತವೆ.</verse>
				<verse number="12">ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದಿರುವುದರಿಂದ ಅರ್ತೆಮನನ್ನಾಗಲೀ ತುಖಿಕನನ್ನಾಗಲೀ ನಿನ್ನ ಬಳಿಗೆ ಕಳಿಸುತ್ತೇನೆ. ಅವರಲ್ಲೊಬ್ಬನು ನಿನ್ನ ಬಳಿಗೆ ಬಂದಾಗ ನೀನು ಕೂಡಲೇ ನಿಕೊಪೊಲಿಗೆ ಬಂದುಬಿಡು.</verse>
				<verse number="13">ಧರ್ಮಶಾಸ್ತ್ರಜ್ಞನಾದ ಜೇನನಿಗೂ ಅಪೊಲೋಸನಿಗೂ ಅವರ ಪ್ರಯಾಣಕ್ಕೆ ಬೇಕಾದ ಸಹಾಯಮಾಡು. ಅವರಿಗೆ ಏನು ಕೊರತೆಯಾಗದಂತೆ ನೋಡಿಕೋ.</verse>
				<verse number="14">ನಮ್ಮ ಜನರು ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಕುಂದುಕೊರತೆಯಲ್ಲಿರುವವರಿಗೆ ನೆರವಾಗಲಿ. ಪರೋಪಕಾರವನ್ನು ಕಲಿತುಕೊಳ್ಳಲಿ. ವ್ಯರ್ಥಜೀವನವನ್ನು ನಡೆಸದಿರಲಿ.</verse>
				<verse number="15">ನನ್ನ ಜೊತೆ ಇರುವವರೆಲ್ಲ ನಿನಗೆ ಶುಭಾಶಯಗಳನ್ನು ಕಳಿಸಿದ್ದಾರೆ. ಅಲ್ಲಿ ನಿನ್ನೊಂದಿಗಿರುವ ಕ್ರೈಸ್ತಬಾಂಧವರಿಗೂ ನನ್ನ ವಂದನೆಗಳನ್ನು ಸಲ್ಲಿಸು. ದೇವರ ಅನುಗ್ರಹ ನಿಮ್ಮೆಲ್ಲರಲ್ಲಿ ಇರಲಿ!</verse>
			</chapter>
		</book>
		<book number="57">
			<chapter number="1">
				<verse number="1">ನಮ್ಮ ಅತಿಪ್ರಿಯನೂ ಸಹೋದ್ಯೋಗಿಯೂ ಆದ ಫಿಲೆಮೋನನಿಗೂ ನಿನ್ನ ಮನೆಯಲ್ಲಿ ಸಭೆಸೇರುವ ಸಹೋದರರಿಗೂ ಹಾಗು ನಮ್ಮ ಸಹೋದರಿ ಅಪ್ಪಿಯ ಮತ್ತು ಸಹಸೈನಿಕ ಅರ್ಖಿಪ್ಪನಿಗೂ - ಕ್ರಿಸ್ತಯೇಸುವಿಗೋಸ್ಕರ ಸೆರೆಯಾಳಾಗಿರುವ ಪೌಲನೂ ಮತ್ತು ನಮ್ಮ ಸಹೋದರ ತಿಮೊಥೇಯನೂ ಬರೆಯುವ ಪತ್ರ: ನಮ್ಮ ತಂದೆಯಾದ ದೇವರು ಮತ್ತು ಒಡೆಯರಾದ ಯೇಸುಕ್ರಿಸ್ತರು ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅನುಗ್ರಹಿಸಲಿ!</verse>
				<verse number="2"></verse>
				<verse number="3"></verse>
				<verse number="4">ಪ್ರಿಯ ಫಿಲೆಮೋನನೇ, ನಾನು ನಿನಗಾಗಿ ಪ್ರಾರ್ಥಿಸುವಾಗಲೆಲ್ಲಾ ದೇವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.</verse>
				<verse number="5">ಏಕೆಂದರೆ, ಪ್ರಭು ಯೇಸುವಿನಲ್ಲೂ ದೇವಜನರೆಲ್ಲರಲ್ಲೂ ನಿನಗಿರುವ ಪ್ರೀತಿವಿಶ್ವಾಸದ ಬಗ್ಗೆ ನಾನು ಕೇಳುತ್ತಿದ್ದೇನೆ.</verse>
				<verse number="6">ನಿನ್ನ ವಿಶ್ವಾಸವನ್ನು ಬೇರೆಯವರಿಗೂ ನೀಡಿ ಕ್ರಿಸ್ತಯೇಸುವಿನಲ್ಲಿ ನಮ್ಮದಾಗಿರುವ ಎಲ್ಲಾ ಒಳಿತಿನ ಅರಿವನ್ನು ಹೆಚ್ಚಿಸಿಕೊಳ್ಳಬೇಕೆಂಬುದೇ ನನ್ನ ಪ್ರಾರ್ಥನೆ.</verse>
				<verse number="7">ಸಹೋದರನೇ, ನಿನ್ನ ಪ್ರೀತಿಯನ್ನು ನೆನೆದು ನಾನು ಆನಂದವನ್ನೂ ಆದರಣೆಯನ್ನೂ ಪಡೆಯುತ್ತಿದ್ದೇನೆ. ದೇವಜನರೆಲ್ಲರ ಹೃದಯಗಳನ್ನು ನೀನು ಉಲ್ಲಾಸಪಡಿಸುತ್ತಿರುವೆ.</verse>
				<verse number="8">ಆದಕಾರಣ, ನೀನು ಮಾಡಬೇಕಾದುದನ್ನು ಮಾಡು ಎಂದು ಆಜ್ಞಾಪಿಸಲು ಕ್ರಿಸ್ತಯೇಸುವಿನಲ್ಲಿ ನನಗೆ ಧೈರ್ಯ ಮತ್ತು ಅಧಿಕಾರಗಳಿವೆ.</verse>
				<verse number="9">ಆದರೂ ನಿನ್ನ ಮೇಲಿರುವ ಪ್ರೀತಿಯ ನಿಮಿತ್ತ ನಾನು ನಿನ್ನಲ್ಲಿ ವಿನಂತಿಸುತ್ತೇನೆ: ವೃದ್ಧಪ್ರಾಯನೂ ಮತ್ತು ಕ್ರಿಸ್ತಯೇಸುವಿಗೋಸ್ಕರ ಈಗ ಸೆರೆಯಾಳೂ ಆಗಿರುವ ಪೌಲನೆಂಬ ನಾನು ಒನೇಸಿಮನ ಪರವಾಗಿ ನಿನ್ನಲ್ಲಿ ವಿಜ್ಞಾಪಿಸುತ್ತೇನೆ.</verse>
				<verse number="10">ಇವನು ಯೇಸುವಿನಲ್ಲಿ ನನ್ನ ಸ್ವಂತ ಮಗನಂತಿದ್ದಾನೆ. ಸೆರೆಮನೆಯಲ್ಲೇ ನಾನು ಅವನನ್ನು ಆಧ್ಯಾತ್ಮಿಕವಾಗಿ ಪಡೆದೆನು.</verse>
				<verse number="11">ಹಿಂದೆ ಅವನು ನಿನಗೆ ಪ್ರಯೋಜಕನಾಗಿರಲಿಲ್ಲ. ಈಗಲಾದರೋ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ.</verse>
				<verse number="12">ನನಗಂತೂ ಇವನು ಪ್ರಾಣದಂತಿದ್ದರೂ ಈಗ ನಿನ್ನ ಬಳಿಗೆ ಕಳುಹಿಸುತ್ತಿದ್ದೇನೆ.</verse>
				<verse number="13">ಶುಭಸಂದೇಶಕ್ಕೋಸ್ಕರ ನಾನು ಸೆರೆಮನೆಯಲ್ಲಿರುವಾಗ ನಿನ್ನ ಬದಲಾಗಿ ನನಗೆ ಸಹಾಯಮಾಡಲು ಇವನನ್ನು ಇಲ್ಲಿಯೇ ಉಳಿಸಿಕೊಳ್ಳಲು ಇಷ್ಟವಿತ್ತು.</verse>
				<verse number="14">ಆದರೆ ನನಗೆ ಸಹಾಯವಾಗಲೆಂದು ನಿನ್ನನ್ನು ಖಡ್ಡಾಯಪಡಿಸಲು ನನಗಂತೂ ಇಷ್ಟವಿಲ್ಲ. ನೀನಾಗಿಯೇ ನಿನ್ನ ಸ್ವಂತ ಇಚ್ಛೆಯಿಂದ ಹಾಗೆ ಮಾಡಬೇಕೆಂಬುದು ನನ್ನ ಅಪೇಕ್ಷೆ. ಆದ್ದರಿಂದ ನಿನ್ನ ಒಪ್ಪಿಗೆಯಿಲ್ಲದೆ ನಾನು ಏನನ್ನೂ ಮಾಡುತ್ತಿಲ್ಲ.</verse>
				<verse number="15">ಸ್ವಲ್ಪಕಾಲ ಒನೇಸಿಮನು ನಿನ್ನಿಂದ ದೂರವಿದ್ದುದಕ್ಕೆ ಕಾರಣ ಆತನು ಸದಾಕಾಲ ನಿನ್ನವನಾಗುವುದಕ್ಕೋ ಏನೋ.</verse>
				<verse number="16">ಈಗ ಅವನು ನಿನ್ನ ಬಳಿಗೆ ಬರುತ್ತಿರುವುದು ಕೇವಲ ಗುಲಾಮನಂತೆ ಅಲ್ಲ. ಅದಕ್ಕಿಂತಲೂ ಬಹಳ ಮೇಲಾದವನಂತೆ, ಕ್ರಿಸ್ತಯೇಸುವಿನಲ್ಲಿ ಪ್ರಿಯ ಸಹೋದರನಂತೆ, ಅವನೆಂದರೆ ನನಗೆಷ್ಟೋ ಪ್ರೀತಿ. ಹಾಗಾದರೆ ನಿನ್ನ ಸೇವಕನೂ ನಮ್ಮ ಪ್ರಭುವಿನಲ್ಲಿ ನಿನ್ನ ಪ್ರಿಯ ಸಹೋದರನೂ ಆಗಿರುವ ಅವನ ಬಗ್ಗೆ ನಿನಗೆ ಮತ್ತಷ್ಟು ಪ್ರೀತಿ ಇರಬೇಕಲ್ಲವೇ?</verse>
				<verse number="17">ಆದ್ದರಿಂದ ಕ್ರಿಸ್ತಯೇಸುವಿನಲ್ಲಿ ನಿನಗೂ ನನಗೂ ಅನ್ಯೋನ್ಯತೆ ಇದೆಯೆಂದು ನೀನು ಪರಿಗಣಿಸುವುದಾದರೆ ನನ್ನನ್ನು ಹೇಗೆ ಸ್ವಾಗತಿಸುತ್ತಿದ್ದೆಯೋ ಹಾಗೆಯೇ ಇವನನ್ನು ಸ್ವಾಗತಿಸು.</verse>
				<verse number="18">ಇವನು ನಿನಗೇನಾದರೂ ಅನ್ಯಾಯ ಮಾಡಿದ್ದಾದರೆ, ಅಥವಾ ಇವನಿಂದ ನಿನಗೇನಾದರೂ ಸಲ್ಲಬೇಕಾದ ಬಾಕಿಯಿದ್ದರೆ, ಅದೆಲ್ಲವನ್ನೂ ನನ್ನ ಲೆಕ್ಕಕ್ಕೆ ಹಾಕು.</verse>
				<verse number="19">ಅದನ್ನು ಪೌಲನೆಂಬ ನಾನೇ ಕೊಟ್ಟು ತೀರಿಸುತ್ತೇನೆ ಎಂದು ನನ್ನ ಹಸ್ತಾಕ್ಷರದಲ್ಲೇ ಬರೆದುಕೊಡುತ್ತಿದ್ದೇನೆ. ಆದರೆ ಈಗ ನೀನು ಏನಾಗಿದ್ದೀಯೋ ಅದು ನನ್ನಿಂದಲೇ. ಹೀಗೆ ನೀನೇ ನನಗೆ ಸಾಲಗಾರನಾಗಿದ್ದೀ ಎಂದು ನಾನು ಹೇಳಬೇಕಾಗಿಲ್ಲ.</verse>
				<verse number="20">ಹೌದು, ಪ್ರಿಯ ಸಹೋದರನೇ, ಪ್ರಭುವಿನ ಹೆಸರಿನಲ್ಲಿ ಇದೊಂದು ಉಪಕಾರವನ್ನು ನನಗೆ ಮಾಡಿಕೊಡು; ಕ್ರಿಸ್ತಯೇಸುವಿನಲ್ಲಿ ನನ್ನ ಹೃದಯ ಆನಂದಿಸುವಂತೆ ಮಾಡು.</verse>
				<verse number="21">ನನ್ನ ಕೋರಿಕೆಯನ್ನು ನೆರವೇರಿಸುವೆ ಎಂಬ ಭರವಸೆಯಿಂದ ಈ ಪತ್ರವನ್ನು ಬರೆಯುತ್ತಿದ್ದೇನೆ. ನಾನು ಕೇಳಿದ್ದಕ್ಕಿಂತಲೂ ಹೆಚ್ಚಾಗಿಯೇ ಮಾಡುವೆಯೆಂದು ನನಗೆ ಗೊತ್ತಿದೆ.</verse>
				<verse number="22">ಇದಲ್ಲದೆ, ನಿಮ್ಮೆಲ್ಲರ ಪ್ರಾರ್ಥನೆಗಳ ಫಲವಾಗಿ ದೇವರು ನನ್ನನ್ನು ಇಲ್ಲಿಂದ ಬಿಡುಗಡೆ ಮಾಡಿ ನಿಮ್ಮ ಬಳಿಗೆ ಕಳುಹಿಸುವರು ಎಂಬ ನಂಬಿಕೆ ನನಗಿದೆ. ಆದ್ದರಿಂದ ನನಗಾಗಿ ಒಂದು ಅತಿಥಿ ಕೊಠಡಿಯನ್ನು ಸಿದ್ಧಪಡಿಸಿಟ್ಟುಕೊಂಡಿರು.</verse>
				<verse number="23">“ಕ್ರಿಸ್ತಯೇಸುವಿಗೋಸ್ಕರ ನನ್ನ ಜೊತೆಯಲ್ಲಿ ಸೆರೆಮನೆಯಲ್ಲಿರುವ ಎಪಫ್ರನೂ ನನ್ನ ಸಹೋದ್ಯೋಗಿಗಳಾದ ಮಾರ್ಕ, ಅರಿಸ್ತಾರ್ಕ, ದೇಮ ಮತ್ತು ಲೂಕನು ನಿಮಗೆ ಶುಭಾಶಯಗಳನ್ನು ಕಳುಹಿಸುತ್ತಾರೆ.</verse>
				<verse number="24"></verse>
				<verse number="25">ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!</verse>
			</chapter>
		</book>
		<book number="58">
			<chapter number="1">
				<verse number="1">ಪೂರ್ವಕಾಲದಲ್ಲಿ ದೇವರು ನಮ್ಮ ಪಿತೃಗಳೊಡನೆ ಹಲವಾರು ವಿಧದಲ್ಲಿ, ಅನೇಕ ಸಾರಿ ಪ್ರವಾದಿಗಳ ಮುಖಾಂತರ ಮಾತನಾಡಿದರು.</verse>
				<verse number="2">ಆದರೆ, ಇತ್ತೀಚಿನ ಅಂತಿಮ ದಿನಗಳಲ್ಲಿ ಅವರು ತಮ್ಮ ಪುತ್ರನ ಮುಖೇನ ನಮ್ಮೊಡನೆ ಮಾತನಾಡಿದ್ದಾರೆ. ದೇವರು ಇಡೀ ವಿಶ್ವವನ್ನು ಉಂಟುಮಾಡಿದ್ದು ಇವರ ಮುಖಾಂತರವೇ; ಸಮಸ್ತಕ್ಕೂ ಬಾಧ್ಯನನ್ನಾಗಿ ನೇಮಿಸಿರುವುದು ಇವರನ್ನೇ.</verse>
				<verse number="3">ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.</verse>
				<verse number="4">ಹೀಗೆ ದೇವರ ಪುತ್ರನು ದೇವದೂತರಿಗಿಂತಲೂ ಶ್ರೇಷ್ಠ; ಅವರಿಗಿಂತಲೂ ಹೆಸರುವಾಸಿಯಾದಾತ.</verse>
				<verse number="5">ಏಕೆಂದರೆ, ದೇವರು ತಮ್ಮ ದೂತರಲ್ಲಿ ಯಾರಿಗಾದರೂ - “ನೀನೇ ನನ್ನ ಪುತ್ರ; ನಾನೇ ನಿನ್ನನಿಂದು ಪಡೆದವ,” ಎಂದು ಎಂದಾದರೂ ಹೇಳಿದ್ದುಂಟೇ? ಅಥವಾ, “ನಾನಾತನಿಗೆ ಪಿತನು, ಆತನೆನಗೆ ಪುತ್ರನು,” ಎಂದಾಗಲಿ ಹೇಳಿದ್ದುಂಟೇ?</verse>
				<verse number="6">ಇದಲ್ಲದೆ ದೇವರು ತಮ್ಮ ಚೊಚ್ಚಲ ಮಗನನ್ನು ಭೂಲೋಕಕ್ಕೆ ಕಳುಹಿಸುವಾಗ” “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ,” ಎಂದಿದ್ದಾರೆ.</verse>
				<verse number="7">ದೇವದೂತರ ವಿಷಯದಲ್ಲಿ - “ದೇವರು ತಮ್ಮ ದೂತರನ್ನು ಬೀಸುಗಾಳಿಯನ್ನಾಗಿಯೂ ತಮ್ಮ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾರೆ,” ಎಂದು ಹೇಳಿದ್ದಾರೆ.</verse>
				<verse number="8">ತಮ್ಮ ಪುತ್ರನನ್ನು ಕುರಿತಾದರೋ: “ದೇವಾ, ನಿನ್ನ ಸಿಂಹಾಸನವು ಶಾಶ್ವತವಾದುದು; ನ್ಯಾಯದಂಡವೇ ನಿನ್ನ ರಾಜದಂಡವಾಗಿದೆ.</verse>
				<verse number="9">ನ್ಯಾಯನೀತಿಗಳನ್ನು ನೀನು ಪ್ರೀತಿಸಿದೆ ಅನ್ಯಾಯ, ಅಕ್ರಮಗಳನ್ನು ದ್ವೇಷಿಸಿದೆ. ಆದ್ದರಿಂದ ದೇವರು, ಹೌದು ನಿನ್ನ ದೇವರು ನಿನ್ನನ್ನು ನಿನ್ನ ಮಿತ್ರನಿಗಿಂತ ಮಿಗಿಲಾಗಿ ಸನ್ಮಾನಿಸಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾರೆ,” ಎಂದು ಹೇಳಿದ್ದಾರೆ.</verse>
				<verse number="10">ಇದಲ್ಲದೆ, “ಸರ್ವೇಶ್ವರಾ, ಆದಿಯಲ್ಲಿ ನೀ ಭೂಮಿಯನು ಸೃಜಿಸಿದೆ ನಭಮಂಡಲದಲ್ಲಿ ನಿನ್ನ ಕೈಚಳಕವ ತೋರಿದೆ.</verse>
				<verse number="11">ಇವುಗಳೆಲ್ಲವೂ ಅಳಿಯುತ್ತವೆ ನೀನಾದರೋ ಸದಾ ಉಳಿಯುವೆ. ಹಳತಾಗುವುವು ಇವೆಲ್ಲಾ ಬಟ್ಟೆಬರೆಯಂತೆ.</verse>
				<verse number="12">ಮುದುರಿ ಮೂಲೆಗೆಸೆಯುವೆ ಇವನ್ನು ಮೇಲಂಗಿಯಂತೆ. ಬದಲಾಯಿಸುವೆ ನೀ ಅವನ್ನು ಉಡುಪಿನಂತೆ ನೀನಾದರೋ ಬದಲಾಗದೆ ಇರುವೆ ಮೊದಲಿನಂತೆ. ಮುಗಿವೇ ಇರದು ನಿನ್ನ ಬಾಳುವೆಗೆ,” ಎಂದೂ ಸಹ ದೇವರು ನುಡಿದಿದ್ದಾರೆ.</verse>
				<verse number="13">ಯಾವ ದೇವದೂತನಿಗಾದರೂ ದೇವರು, “ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿ ಹಾಕುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು,” ಎಂದು ಎಂದಾದರೂ ಹೇಳಿದ್ದುಂಟೇ?</verse>
				<verse number="14">ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?</verse>
			</chapter>
			<chapter number="2">
				<verse number="1">ಆದ್ದರಿಂದಲೇ ಹುಚ್ಚುಹೊಳೆಯಲ್ಲಿ ಕೊಚ್ಚಿಹೋಗದ ಹಾಗೆ ನಾವು ಕೇಳಿರುವ ಸತ್ಯಗಳಿಗೆ ಬಿಗಿಯಾಗಿ ಕಚ್ಚಿಕೊಳ್ಳಬೇಕು.</verse>
				<verse number="2">ಏಕೆಂದರೆ, ದೇವದೂತರ ಮುಖಾಂತರ ನಮ್ಮ ಪೂರ್ವಜರಿಗೆ ಕೊಡಲಾದ ಸಂದೇಶವು ಅಕ್ಷಯವಾಗಿದ್ದು ಅದನ್ನು ಮೀರಿ ಮಾಡಿದ ಪ್ರತಿಯೊಂದು ತಪ್ಪು ಮತ್ತು ಅವಿಧೇಯತೆಯು ಶಿಕ್ಷಾರ್ಹವಾಗಿದ್ದರೆ,</verse>
				<verse number="3">ಇಂಥ ಉತ್ಕೃಷ್ಟ ಜೀವೋದ್ಧಾರವನ್ನು ಪಡೆದಿರುವ ನಾವು ಅದನ್ನು ಅಲಕ್ಷ್ಯಮಾಡಿದಲ್ಲಿ ಶಿಕ್ಷೆಯಿಂದ ಹೇಗೆತಾನೆ ತಪ್ಪಿಸಿಕೊಳ್ಳಬಲ್ಲೆವು? ಈ ಜೀವೋದ್ಧಾರವನ್ನು ಮೊತ್ತಮೊದಲು ಸಾರಿದವರು ಪ್ರಭುವೇ. ಅವರನ್ನು ಆಗ ಆಲಿಸಿದವರು ಅದನ್ನು ನಮಗೆ ಪ್ರಮಾಣೀಕರಿಸಿದ್ದಾರೆ.</verse>
				<verse number="4">ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಹಲವಾರು ಮಹತ್ಕಾರ್ಯಗಳಿಂದಲೂ ಮತ್ತು ತಮ್ಮ ಚಿತ್ತಾನುಸಾರ ಅನುಗ್ರಹಿಸಿದ ಪವಿತ್ರಾತ್ಮ ಅವರ ವರದಾನಗಳಿಂದಲೂ ದೇವರು ಆ ಪ್ರಮಾಣವನ್ನು ಪುಷ್ಟೀಕರಿಸಿದ್ದಾರೆ.</verse>
				<verse number="5">ನಾವು ಪ್ರಸ್ತಾಪಿಸುತ್ತಿರುವ ನೂತನ ಸಾಮ್ರಾಜ್ಯವನ್ನು ದೇವರು ತಮ್ಮ ದೂತರಿಗೆ ಅಧೀನಪಡಿಸಲಿಲ್ಲ.</verse>
				<verse number="6">ಅದಕ್ಕೆ ಬದಲಾಗಿ, ಪವಿತ್ರಗ್ರಂಥದಲ್ಲಿ ಒಂದೆಡೆ ಹೀಗೆಂದು ಸ್ಪಷ್ಟವಾಗಿ ಹೇಳಲಾಗಿದೆ: “ಓ ದೇವಾ, ಹುಲುಮಾನವನೆಷ್ಟರವನು ನೀನವನ ಗಮನಿಸಲು?</verse>
				<verse number="7">	ನರಪುತ್ರನು ಎನಿತರವನು ನೀನವನ ಅರಸಿಬರಲು? ದೇವದೂತರಿಗಿಂತಲೂ ಆತನನು ತುಸುವೇ ತಗ್ಗಿಸಿದೆ ಘನಗೌರವವನು, ಸಿರಿಮಹಿಮೆಯನು ಮುಕುಟವಾಗಿ ಮುಡಿಸಿದೆ;</verse>
				<verse number="8">ಆತನಿಗೆ ನೀನೆಲ್ಲವನು ಅಧೀನವಾಗಿಸಿದೆ.” ಹೀಗೆ ದೇವರು ಎಲ್ಲವನ್ನು ಆತನಿಗೆ ಅಧೀನಪಡಿಸಿರುವುದರಿಂದ ಆತನಿಗೆ ಅಧೀನವಲ್ಲದ್ದು ಏನೂ ಇಲ್ಲವೆಂದಾಯಿತು. ಆದರೂ ಸದ್ಯಕ್ಕೆ ಎಲ್ಲವೂ ಆತನಿಗೆ ಅಧೀನವಾಗಿರುವುದನ್ನು ನಾವು ಕಾಣುತ್ತಿಲ್ಲ.</verse>
				<verse number="9">ದೇವದೂತರಿಗಿಂತ ಕೊಂಚಕಾಲವೇ ತುಸು ತಗ್ಗಿಸಲಾದ ಒಬ್ಬರನ್ನು, ಅಂದರೆ ಯೇಸುವನ್ನು ಮಾತ್ರ ನಾವು ಕಾಣುತ್ತೇವೆ. ಇವರು ಯಾತನಾ ಮರಣವನ್ನು ಅನುಭವಿಸಿದ್ದರಿಂದ ‘ಘನಗೌರವವನ್ನೂ ಸಿರಿಮಹಿಮೆಯನ್ನೂ ಮುಕುಟವಾಗಿ’ ಪಡೆದುದನ್ನು ನಾವು ಕಾಣುತ್ತೇವೆ. ದೈವಾನುಗ್ರಹದಿಂದ ಎಲ್ಲಾ ಮಾನವರ ಕಲ್ಯಾಣಕ್ಕಾಗಿ ಅವರು ಸಾವನ್ನು ಅನುಭವಿಸಬೇಕಾಗಿತ್ತು.</verse>
				<verse number="10">ಸಮಸ್ತವನ್ನೂ ಸೃಷ್ಟಿಸಿ ಪರಿಪಾಲಿಸಿಕೊಂಡುಬರುವ ದೇವರು ತಮ್ಮ ಮಹಿಮೆಯಲ್ಲಿ ಪಾಲುಗೊಳ್ಳಲು ಮಕ್ಕಳನೇಕರನ್ನು ಕರೆತರುವಂತೆ ಉದ್ಧಾರ ಪ್ರವರ್ತಕರಾದ ಯೇಸುವನ್ನು ಹಿಂಸೆಬಾಧೆಗಳ ಮೂಲಕ ಪರಿಪೂರ್ಣವಾಗಿಸಿದ್ದು ಯುಕ್ತವೇ ಸರಿ.</verse>
				<verse number="11">ಪವಿತ್ರಗೊಳಿಸುವವನಿಗೂ ಪವಿತ್ರರಾಗುವವರಿಗೂ ಒಬ್ಬನೇ ತಂದೆ. ಈ ಕಾರಣ, ಪವಿತ್ರಗೊಳಿಸುವ ಯೇಸು, ಪವಿತ್ರರಾಗುವವರನ್ನು ‘ಸಹೋದರರು’ ಎಂದು ಕರೆಯಲು ನಾಚಿಕೆಪಡಲಿಲ್ಲ.</verse>
				<verse number="12">“ಸಾರುವೆನು ನನ್ನ ಸೋದರರಿಗೆ ನಿನ್ನ ಮಹಿಮೆಯನು ಮಾಡುವೆನು ಸಭಾಮಧ್ಯೆ ನಿನ್ನ ಗುಣಗಾನವನು,” ಎಂದೂ</verse>
				<verse number="13">“ದೇವರಲ್ಲಿ ಭರವಸೆಯಿಡುವೆನು ನಾನು,” ಎಂದೂ “ಇಗೋ, ಇರುವೆವು ನಾನು ಮತ್ತು ದೇವರೆನಗಿತ್ತ ಕುವರರು,” ಎಂದು ಹೇಳಿದ್ದಾರೆ.</verse>
				<verse number="14">ಇದಲ್ಲದೆ, ಮಕ್ಕಳು ರಕ್ತಮಾಂಸಧಾರಿಗಳಾಗಿರುವುದರಿಂದ ಯೇಸುವು ಅವರಂತೆ ರಕ್ತಮಾಂಸಧಾರಿಯಾದರು. ಹೀಗೆ ಮರಣಾಧಿಕಾರಿಯಾಗಿದ್ದ ಸೈತಾನನನ್ನು ತಮ್ಮ ಮರಣದಿಂದಲೇ ಸೋಲಿಸಲು ಮತ್ತು ಮರಣಭಯದ ನಿಮಿತ್ತ ತಮ್ಮ ಜೀವನದುದ್ದಕ್ಕೂ ದಾಸ್ಯದಲ್ಲಿದ್ದವರನ್ನು ಬಿಡುಗಡೆಮಾಡಲು ಅವರು ಮನುಷ್ಯರಾದರು.</verse>
				<verse number="15"></verse>
				<verse number="16">ಅವರು ಉದ್ಧಾರ ಮಾಡಬಂದುದು ಖಂಡಿತವಾಗಿ ದೇವದೂತರನ್ನಲ್ಲ, ಅಬ್ರಹಾಮನ ಸಂತತಿಯನ್ನು.</verse>
				<verse number="17">ಆದಕಾರಣ, ಎಲ್ಲದರಲ್ಲೂ ತಮ್ಮ ಸಹೋದರರಿಗೆ ಸಮಾನರಾಗಬೇಕಾಗಿತ್ತು; ಜನರ ಪಾಪನಿವಾರಣೆಗಾಗಿ ದೇವರ ಕಾರ್ಯಗಳನ್ನು ನಿರ್ವಹಿಸುವ ದಯಾಮಯನೂ ನಂಬಿಕಸ್ಥನೂ ಆದ ಪ್ರಧಾನ ಯಾಜಕನಾಗಬೇಕಾಗಿತ್ತು.</verse>
				<verse number="18">ಸ್ವತಃ ತಾವೇ ಶೋಧನೆಗೊಳಗಾಗಿ ಯಾತನೆಯನ್ನು ಅನುಭವಿಸಿದ್ದರಿಂದ ಶೋಧನೆಗೊಳಗಾಗುವವರಿಗೆ ನೆರವಾಗಲು ಯೇಸು ಸಮರ್ಥರಾದರು.</verse>
			</chapter>
			<chapter number="3">
				<verse number="1">ಹೀಗಿರುವಲ್ಲಿ ದೇವಜನರಾದ ಸಹೋದರರೇ, ಸ್ವರ್ಗಸೌಭಾಗ್ಯದಲ್ಲಿ ಸಹಭಾಗಿಗಳಾಗಲು ಕರೆ ಹೊಂದಿದವರೇ, ದೇವರು ಕಳುಹಿಸಿದಂಥವರು ಹಾಗೂ ನಾವು ವಿಶ್ವಾಸಿಸುವ ಧರ್ಮದ ಪ್ರಧಾನಯಾಜಕರು ಆದ ಯೇಸುವನ್ನು ಭಕ್ತಿಯಿಂದ ಧ್ಯಾನಿಸಿರಿ.</verse>
				<verse number="2">ದೇವಮಂದಿರ ಸೇವೆಯಲ್ಲಿ ಮೋಶೆ ಪ್ರಾಮಾಣಿಕನಾಗಿದ್ದಂತೆಯೇ ಯೇಸುಸ್ವಾಮಿ ತಮ್ಮನ್ನು ನೇಮಿಸಿದವರಿಗೆ ಪ್ರಾಮಾಣಿಕರಾಗಿದ್ದರು.</verse>
				<verse number="3">ಆದರೆ, ಮನೆಕಟ್ಟುವವನು ಮನೆಗಿಂತ ಹೆಚ್ಚಿನ ಮಾನ್ಯತೆ ಉಳ್ಳವನಾಗಿರುವಂತೆ ಯೇಸು, ಮೋಶೆಗಿಂತಲೂ ಹೆಚ್ಚಿನ ಗೌರವಕ್ಕೆ ಪಾತ್ರರು.</verse>
				<verse number="4">ಪ್ರತಿಯೊಂದು ಮನೆಗೂ ಕಟ್ಟಿದವನೊಬ್ಬನು ಇರುತ್ತಾನೆ; ಸಮಸ್ತವನ್ನು ಕಟ್ಟಿದವರಾದರೋ ದೇವರೇ.</verse>
				<verse number="5">ಮೋಶೆ ದೇವರ ಮನೆಗೆಲ್ಲಾ ಪ್ರಾಮಾಣಿಕ ದಾಸನಾಗಿದ್ದನು; ಮುಂದೆ ಪ್ರಕಟವಾಗಬೇಕಿದ್ದ ಸಂಗತಿಗಳಿಗೆ ಸಾಕ್ಷಿಯಾಗಿದ್ದನು.</verse>
				<verse number="6">ಕ್ರಿಸ್ತಯೇಸುವಾದರೋ, ದೇವರ ಮನೆಯಲ್ಲಿ ಅಧಿಕಾರ ಹೊಂದಿದ ಪ್ರಾಮಾಣಿಕ ಪುತ್ರನಾಗಿದ್ದಾರೆ. ನಾವು ನಿರೀಕ್ಷಿಸುತ್ತಿರುವ ಭಾಗ್ಯದ ಬಗ್ಗೆ ನಮಗಿರುವ ಶ್ರದ್ಧೆಯನ್ನೂ ಶೌರ್ಯವನ್ನೂ ಕಳೆದುಕೊಳ್ಳದೆ ದೃಢವಾಗಿದ್ದರೆ, ನಾವೇ ಅವರ ಮನೆಯಾಗಿರುತ್ತೇವೆ.</verse>
				<verse number="7">ಆದಕಾರಣ ಪವಿತ್ರಾತ್ಮ ಹೇಳುವ ಪ್ರಕಾರ: “ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು.</verse>
				<verse number="8">ಮರುಭೂಮಿಯಲ್ಲವರು ದೇವರನು ಪರೀಕ್ಷಿಸಿದರು ಆತನ ವಿರುದ್ಧ ಅಲ್ಲೇ ದಂಗೆ ಎದ್ದರು.</verse>
				<verse number="9">ಎಂದೇ ದೇವರಿಂತೆಂದರು: ಮರುಭೂಮಿಯಲಿ ಅವರೆನ್ನನು ಕೆಣಕಿದರು; ನಲವತ್ತು ವರುಷ ನಾನೆಸಗಿದ ಮಹತ್ಕಾರ್ಯಗಳನು ಕಂಡರಾದರೂ ಎನ್ನ ಕೆಣಕಿ ಪರೀಕ್ಷಿಸಿದರು.</verse>
				<verse number="10">ಎಂತಲೇ ಆ ಜನರ ವಿರುದ್ಧ ಕೆರಳಿ ಇಂತೆಂದನು: ಹಾದಿ ತಪ್ಪಿದ ಹೃದಯಿಗಳು ಇವರೆಂದಿಗೂ, ಗ್ರಹಿಸಿಕೊಳ್ಳರಿವರು ಎನ್ನ ಮಾರ್ಗವನು</verse>
				<verse number="11">ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ ಎಂದು ಸಿಟ್ಟುಗೊಂಡು ಶಪಥ ಮಾಡಿದೆನು.”</verse>
				<verse number="12">ಸಹೋದರರೇ, ಜೀವಸ್ವರೂಪರಾದ ದೇವರನ್ನು ಬಿಟ್ಟಗಲುವ ಕೆಟ್ಟಬುದ್ಧಿಯೂ ಅವಿಶ್ವಾಸವೂ ನಿಮ್ಮಲ್ಲಿ ಯಾರಿಗೂ ಇರದಂತೆ ಎಚ್ಚರಿಕೆಯಾಗಿರಿ.</verse>
				<verse number="13">ನಿಮ್ಮಲ್ಲಿ ಯಾರೂ ಪಾಪದಿಂದ ಮೋಸಹೋಗಿ ಕಠಿಣರಾಗದಂತೆ “ಇಂದು” ಎನ್ನುವ ಕಾಲವು ಇರುವ ತನಕ ಪ್ರತಿನಿತ್ಯವು ಒಬ್ಬರನ್ನೊಬ್ಬರು ಎಚ್ಚರಿಸಿರಿ.</verse>
				<verse number="14">ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.</verse>
				<verse number="15">“ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು ಮರುಭೂಮಿಯಲಿ ದೇವರ ವಿರುದ್ಧ ದಂಗೆಯೆದ್ದವರವರು.”</verse>
				<verse number="16">ಇಲ್ಲಿ, ದೇವರ ದನಿಯನು ಕೇಳಿಯೂ ದಂಗೆ ಎದ್ದವರು ಯಾರು? ಮೋಶೆಯ ಮುಂದಾಳತ್ವದಲ್ಲಿ ಈಜಿಪ್ಟ್ ದೇಶವನ್ನು ಬಿಟ್ಟುಬಂದ ಎಲ್ಲರೂ ಅಲ್ಲವೇ?</verse>
				<verse number="17">ನಲವತ್ತು ವರ್ಷಗಳು ದೇವರು ಸಿಟ್ಟುಗೊಂಡದ್ದು ಯಾರ ಮೇಲೆ? ಪಾಪಮಾಡಿದವರ ಮೇಲಲ್ಲವೇ? ಅವರ ಶವಗಳು ಬಿದ್ದುದು ಮರುಭೂಮಿಯಲ್ಲಲ್ಲವೇ?</verse>
				<verse number="18">“ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ” ಎಂದು ಯಾರನ್ನು ಕುರಿತು ಶಪಥ ಮಾಡಿದರು? ತಮಗೆ ಅವಿಧೇಯರಾದ ಜನರನ್ನು ಕುರಿತಲ್ಲವೇ?</verse>
				<verse number="19">ಆ ವಿಶ್ರಾಂತಿಯ ನೆಲೆಯನ್ನು ಅವರು ಸೇರದೆಹೋದದ್ದು ತಮ್ಮ ಅವಿಶ್ವಾಸದಿಂದಲೇ ಎಂಬುದು ನಮಗೆ ಸ್ಪಷ್ಟವಾಗುತ್ತದೆ.</verse>
			</chapter>
			<chapter number="4">
				<verse number="1">ದೇವರು ತಮ್ಮ ವಿಶ್ರಾಂತಿಯ ನೆಲೆಯನ್ನು ನೀಡುವುದಾಗಿ ಮಾಡಿದ ವಾಗ್ದಾನ ಇನ್ನೂ ರದ್ದಾಗದೆ ಉಳಿದಿದೆ. ನಿಮ್ಮಲ್ಲಿ ಯಾರೂ ಆ ವಾಗ್ದಾನದ ಫಲವನ್ನು ಪಡೆಯದೆ ಇರಬಾರದು. ಎಂತಲೇ, ನಾವು ಭಯಭಕ್ತಿಯಿಂದ ಬಾಳೋಣ.</verse>
				<verse number="2">ಶುಭವಾರ್ತೆಯನ್ನು ಅವರಿಗೆ ಸಾರಲಾದಂತೆ ನಮಗೂ ಸಾರಲಾಯಿತು. ಅವರು ಅದನ್ನು ಆಲಿಸಿದರು; ಆದರೆ ಅವರಲ್ಲಿ ವಿಶ್ವಾಸವಿರಲಿಲ್ಲ. ಈ ಕಾರಣ, ಅವರು ಕೇಳಿದ ಸಂದೇಶದಿಂದ ಫಲ ಪಡೆಯದೆ ಹೋದರು.</verse>
				<verse number="3">ಲೋಕಾದಿಯಲ್ಲೇ, ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿದ್ದರೂ ಅವರು, “ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ ಎಂದು ಸಿಟ್ಟುಗೊಂಡು ಶಪಥ ಮಾಡಿದೆನು,” ಎಂದು ಹೇಳಿದ್ದಾರೆ. ವಿಶ್ವಾಸಿಸುವ ನಾವಾದರೋ ಆ ವಿಶ್ರಾಂತಿಯ ನೆಲೆಯನ್ನು ಸೇರುತ್ತೇವೆ.</verse>
				<verse number="4">ಪವಿತ್ರಗ್ರಂಥದ ಒಂದೆಡೆಯಲ್ಲಿ, ಏಳನೆಯ ದಿನವನ್ನು ಕುರಿತು: “ದೇವರು ತಮ್ಮ ಸೃಷ್ಟಿಕಾರ್ಯಗಳನ್ನೆಲ್ಲಾ ಮುಗಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು,” ಎಂದು ಬರೆದದೆ.</verse>
				<verse number="5">ಮೇಲೆ ಹೇಳಿದ ವಚನದಲ್ಲಾದರೋ, “ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ,” ಎಂದಿದೆ.</verse>
				<verse number="6">ಆದುದರಿಂದ, ಈ ವಿಶ್ರಾಂತಿಯ ನೆಲೆಯನ್ನು ಸೇರುವ ಸಾಧ್ಯತೆ ಬೇರೆಯವರಿಗಾದರೂ ಇದೆ ಎಂಬುದು ಸ್ಪಷ್ಟವಾಗುತ್ತದೆ. ದೇವರ ವಾಕ್ಯವನ್ನು ಮೊದಲು ಕೇಳಿದವರಾದರೋ, ತಮ್ಮ ಅವಿಶ್ವಾಸದಿಂದ ಅದನ್ನು ಸೇರದೆಹೋದರು.</verse>
				<verse number="7">ಈ ಕಾರಣದಿಂದಲೇ ದೇವರು, “ಇಂದು” ಎಂದು ಬೇರೊಂದು ದಿನವನ್ನು ಗೊತ್ತುಮಾಡುತ್ತಾರೆ. ಈ ದಿನವನ್ನು ಕುರಿತೇ ದೀರ್ಘಕಾಲದ ನಂತರ ದಾವೀದನ ಮುಖಾಂತರ: “ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು,” ಎಂದು ಹೇಳಿದ್ದಾರೆ.</verse>
				<verse number="8">ಯೆಹೋಶುವನು ಆ ಜನರನ್ನು ವಾಗ್ದತ್ತ ವಿಶ್ರಾಂತಿಗೆ ಸೇರಿಸಿದ್ದರೆ ದೇವರು ಬೇರೊಂದು ದಿನವನ್ನು ಗೊತ್ತುಮಾಡುತ್ತಿರಲಿಲ್ಲ.</verse>
				<verse number="9">ಆದಕಾರಣ, ದೇವಜನರು ಅನುಭವಿಸುವುದಕ್ಕಿರುವ ಸಬ್ಬತ್ತೆಂಬ ವಿಶ್ರಾಂತಿ ಇನ್ನೂ ಉಳಿದಿದೆ.</verse>
				<verse number="10">ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿ ವಿಶ್ರಾಂತಿಪಡೆದಂತೆ ದೇವರ ವಿಶ್ರಾಂತಿಯನ್ನು ಪಡೆದವನು ಸಹ ತನ್ನ ಕೆಲಸಕಾರ್ಯಗಳನ್ನು ಮುಗಿಸಿ ವಿಶ್ರಾಂತಿಯನ್ನು ಪಡೆಯುತ್ತಾನೆ.</verse>
				<verse number="11">ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಪಡೋಣ. ನಮ್ಮಲ್ಲಿ ಯಾರೂ ಆ ಜನರಂತೆ ಅವಿಧೇಯತೆಯಿಂದ ವರ್ತಿಸಿ ವಿಶ್ವಾಸಭ್ರಷ್ಟರಾಗದೆ ಇರೋಣ.</verse>
				<verse number="12">ದೇವರ ವಾಕ್ಯ ಜೀವಂತವಾದುದು, ಕ್ರಿಯಾತ್ಮಕವಾದುದು; ಎಂಥ ಇಬ್ಬಾಯಿ ಕತ್ತಿಗಿಂತಲೂ ಹರಿತವಾದುದು. ಪ್ರಾಣ ಮತ್ತು ಆತ್ಮಗಳ, ಕೀಲು ಮತ್ತು ಮಜ್ಜೆಗಳ ಭೇದವನ್ನು ಛೇದಿಸುವಂತಾದ್ದು; ಹೃದಯದ ಆಶೆ ಆಲೋಚನೆಗಳನ್ನು ವಿವೇಚಿಸುವಂತಾದ್ದು.</verse>
				<verse number="13">ನಾವು ಯಾರಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ, ಅವರ ಕಣ್ಣಿಗೆ ಮುಚ್ಚುಮರೆಯಾದುದು ಯಾವುದೂ ಇಲ್ಲ. ಅವರ ದೃಷ್ಟಿಗೆ ಎಲ್ಲವೂ ಬಟ್ಟಬಯಲು.</verse>
				<verse number="14">ಸ್ವರ್ಗಲೋಕಕ್ಕೆ ಏರಿಹೋದ ದೇವರ ಪುತ್ರನಾದ ಯೇಸುವೇ ನಮಗೆ ಶ್ರೇಷ್ಠ ಹಾಗೂ ಪ್ರಧಾನಯಾಜಕ ಆಗಿರುವುದರಿಂದ ನಾವು ನಿವೇದಿಸುವ ವಿಶ್ವಾಸದಲ್ಲಿ ಸದೃಢರಾಗಿರೋಣ.</verse>
				<verse number="15">ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.</verse>
				<verse number="16">ಆದಕಾರಣ, ನಾವು ಸಮಯೋಚಿತ ಸಹಾಯವನ್ನು ಅವರ ಅನುಗ್ರಹದಿಂದ ಪಡೆಯಲು ಮತ್ತು ಅವರ ಕರುಣೆಯನ್ನು ಸವಿಯಲು ಧೈರ್ಯದಿಂದ ಅವರ ಕೃಪಾಸನವನ್ನು ಸಮೀಪಿಸೋಣ.</verse>
			</chapter>
			<chapter number="5">
				<verse number="1">ಪ್ರತಿಯೊಬ್ಬ ಪ್ರಧಾನಯಾಜಕ ಜನರ ಮಧ್ಯದಿಂದ ಆರಿಸಲಾದವನು; ಜನರ ಪರವಾಗಿ ದೇವರ ಸನ್ನಿಧಿಯಲ್ಲಿ ಸೇವೆಸಲ್ಲಿಸಲು ಮತ್ತು ಪಾಪಪರಿಹಾರಕ್ಕಾಗಿ ಬಲಿಗಳನ್ನೂ ಕಾಣಿಕೆಗಳನ್ನೂ ಸಮರ್ಪಿಸಲು ನೇಮಕಗೊಂಡವನು.</verse>
				<verse number="2">ತಾನೂ ದುರ್ಬಲ ಮಾನವನಾದ ಕಾರಣ, ಆತನು ಅಜ್ಞಾನಿಗಳನ್ನೂ ದುರ್ಮಾರ್ಗಿಗಳನ್ನೂ ಸಹಾನುಭೂತಿಯಿಂದ ಕಾಣಬಲ್ಲನು.</verse>
				<verse number="3">ಜನರಿಗೋಸ್ಕರ ಹೇಗೋ ಹಾಗೆಯೇ ತನ್ನ ದೌರ್ಬಲ್ಯದ ನಿಮಿತ್ತ ತನಗೋಸ್ಕರವೂ ಆತನು ಪಾಪಪರಿಹಾರಕಬಲಿಯನ್ನು ಅರ್ಪಿಸಬೇಕಾಗಿದೆ.</verse>
				<verse number="4">ಅಲ್ಲದೆ, ಪ್ರಧಾನಯಾಜಕನೆಂಬ ಗೌರವಪದವಿಯನ್ನು ತನ್ನಷ್ಟಕ್ಕೆ ತಾನೇ ಯಾರೂ ವಹಿಸಿಕೊಳ್ಳರು. ಆರೋನನಂತೆ ಅವರೂ ದೇವರಿಂದ ಕರೆ ಹೊಂದಿದವರಾಗಿರಬೇಕು.</verse>
				<verse number="5">ಅದೇ ರೀತಿ ಕ್ರಿಸ್ತಯೇಸು, ಪ್ರಧಾನಯಾಜಕನೆಂಬ ಉನ್ನತ ಪದವಿಗೆ ತನ್ನನ್ನೇ ಏರಿಸಿಕೊಳ್ಳಲಿಲ್ಲ. “ನೀನೇ ನನ್ನ ಪುತ್ರನು; ನಾನೇ ನಿನ್ನನ್ನು ಪಡೆದಿದ್ದೇನೆ,” ಎಂದ ದೇವರೇ ಅವರನ್ನು ಆ ಪದವಿಗೆ ಏರಿಸಿದರು.</verse>
				<verse number="6">ಅವರೇ ಮತ್ತೊಂದು ಕಡೆಯಲ್ಲಿ: “ನೀನು ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಯಾಜಕ,” ಎಂದಿದ್ದಾರೆ.</verse>
				<verse number="7">ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.</verse>
				<verse number="8">ಯೇಸು, ದೇವರ ಪುತ್ರರಾಗಿದ್ದರೂ ಹಿಂಸೆಬಾಧೆಗಳನ್ನು ತಪ್ಪಿಸಿಕೊಳ್ಳದೆ ವಿಧೇಯತೆಯನ್ನು ಅನುಭವದಿಂದ ಅರಿತುಕೊಂಡರು.</verse>
				<verse number="9">ಹೀಗೆ, ಅವರು ಸ್ವತಃ ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ಶಾಶ್ವತ ಜೀವೋದ್ಧಾರಕ್ಕೆ ಕಾರಣರಾದರು.</verse>
				<verse number="10">ಅಲ್ಲದೆ, ದೇವರಿಂದ, “ಮೆಲ್ಕಿಸದೇಕನ ಪರಂಪರೆಗೆ ಸೇರಿದ ಪ್ರಧಾನಯಾಜಕ,” ಎನಿಸಿಕೊಂಡರು.</verse>
				<verse number="11">ಈ ವಿಷಯದಲ್ಲಿ ನಾವು ಹೇಳಬೇಕಾದುದು ಎಷ್ಟೋ ಇದೆ. ಆದರೆ ನಿಮ್ಮ ಬುದ್ಧಿಯು ಮಂದವಾಗಿರುವುದರಿಂದ ಅದನ್ನೆಲ್ಲಾ ವಿವರಿಸುವುದು ಕಷ್ಟವಾಗಿದೆ.</verse>
				<verse number="12">ಇಷ್ಟರೊಳಗೆ ನೀವು ಇತರರಿಗೆ ಬೋಧಿಸಲು ಶಕ್ತರಾಗಬೇಕಾಗಿತ್ತು; ಆದರೆ ದೇವರ ವಾಕ್ಯದ ಮೂಲ ಪಾಠಗಳನ್ನೇ ಇತರರು ನಿಮಗೆ ಮತ್ತೆ ಹೇಳಿಕೊಡಬೇಕಾಗಿದೆ. ಗಟ್ಟಿಯಾದ ಆಹಾರವನ್ನು ಉಣ್ಣುವ ಬದಲು ನೀವಿನ್ನೂ ಹಾಲನ್ನೇ ಕುಡಿಯಬೇಕಾಗಿದೆ.</verse>
				<verse number="13">ಹಾಲು ಕುಡಿಯಬೇಕಾದವನು ಹಸುಗೂಸು. ನ್ಯಾಯನೀತಿಯ ಅನುಭವ ಅವನಿಗಿಲ್ಲ.</verse>
				<verse number="14">ಗಟ್ಟಿಯಾದ ಆಹಾರ ಬೆಳೆದವರಿಗೆ; ಸ್ವಂತ ಅನುಭವದಿಂದ ಒಳ್ಳೆಯದಾವುದು ಕೆಟ್ಟದ್ದಾವುದು ಎಂದು ಅರಿತುಕೊಳ್ಳಬಲ್ಲವರಿಗೆ.</verse>
			</chapter>
			<chapter number="6">
				<verse number="1">ಆದುದರಿಂದ ಕ್ರಿಸ್ತಯೇಸುವನ್ನು ಕುರಿತಾದ ಪ್ರಾಥಮಿಕ ಪಾಠಗಳಲ್ಲೇ ನಿಂತುಬಿಡದೆ ಪ್ರೌಢ ವಿಷಯಗಳತ್ತ ಸಾಗೋಣ.</verse>
				<verse number="2">ಜಡ ಕರ್ಮಗಳನ್ನು ಬಿಟ್ಟು ದೇವರಲ್ಲಿ ವಿಶ್ವಾಸವಿಡುವುದು, ಸ್ನಾನಸಂಸ್ಕಾರಗಳು, ಹಸ್ತನಿಕ್ಷೇಪ, ಸತ್ತವರ ಪುನರುತ್ಥಾನ, ನಿತ್ಯವಾದ ನ್ಯಾಯತೀರ್ಪು - ಈ ಬೋಧನಾ ಅಸ್ತಿವಾರವನ್ನು ಮತ್ತೆ ಮತ್ತೆ ಹಾಕಬೇಕಾಗಿಲ್ಲ.</verse>
				<verse number="3">ದೇವರ ಚಿತ್ತವಾದರೆ ಪ್ರೌಢ ವಿಷಯಗಳತ್ತ ಪ್ರಗತಿಪರರಾಗೋಣ.</verse>
				<verse number="4">ಒಬ್ಬನು, ಒಮ್ಮೆ ಜ್ಞಾನೋದಯವನ್ನು ಪಡೆದು, ಸ್ವರ್ಗೀಯ ವರದಾನಗಳನ್ನು ಆಸ್ವಾದಿಸಿ, ಪವಿತ್ರಾತ್ಮ ಅವರ ಸಹಭಾಗಿಯಾಗಿ,</verse>
				<verse number="5">ದೇವರ ವಾಕ್ಯದ ಸವಿಯುಂಡು, ಬರಲಿರುವ ಯುಗದ ವೈಭವವನ್ನು ಮನಗಂಡು,</verse>
				<verse number="6">ಅನಂತರವೂ ವಿಶ್ವಾಸಭ್ರಷ್ಟನಾದರೆ, ಅಂಥವನು ಪಶ್ಚಾತ್ತಾಪಪಟ್ಟು ದೈವಾಭಿಮುಖನಾಗುವುದು ಅಸಾಧ್ಯ. ಏಕೆಂದರೆ, ಅಂಥವನು ತನ್ನ ಪಾಲಿಗೆ ದೇವರ ಪುತ್ರನನ್ನು ಪುನಃ ಶಿಲುಬೆಗೆ ಏರಿಸಿ ಅವರನ್ನು ಬಹಿರಂಗವಾಗಿ ಅವಮಾನಗೊಳಿಸುವವನಾಗುತ್ತಾನೆ.</verse>
				<verse number="7">ಭೂಮಿಯು ಕಾಲಾನುಕಾಲಕ್ಕೆ ತನ್ನ ಮೇಲೆ ಬೀಳುವ ಮಳೆಯ ನೀರನ್ನು ಹೀರಿಕೊಂಡು ವ್ಯವಸಾಯಗಾರನಿಗೆ ಅನುಕೂಲವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಪಡೆಯುತ್ತದೆ.</verse>
				<verse number="8">ಆದರೆ, ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ಅಪ್ರಯೋಜಕವೆನಿಸಿಕೊಂಡು ಶಾಪಕ್ಕೆ ಗುರಿಯಾಗುತ್ತದೆ; ಕೊನೆಗದು ಬೆಂಕಿಗೆ ತುತ್ತಾಗುತ್ತದೆ.</verse>
				<verse number="9">ಪ್ರಿಯರೇ, ನಾವು ಈ ರೀತಿ ಹೇಳಿದೆವಾದರೂ ನಿಮ್ಮ ಪರಿಸ್ಥಿತಿ ಉತ್ತಮವಾಗಿದೆ ಮತ್ತು ನೀವು ಜೀವೋದ್ಧಾರದ ಮಾರ್ಗದಲ್ಲಿ ಇದ್ದೀರಿ ಎಂಬ ದೃಢವಾದ ನಂಬಿಕೆ ನನಗಿದೆ.</verse>
				<verse number="10">ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.</verse>
				<verse number="11">ನೀವು ಹೊಂದಿರುವ ನಿರೀಕ್ಷೆ ಪೂರ್ಣವಾಗಿ ಕೈಗೂಡುವಂತೆ ನಿಮ್ಮಲ್ಲಿ ಪ್ರತಿಯೊಬ್ಬನೂ ಮೊದಲಿನ ಆಸಕ್ತಿಯನ್ನು ಕಡೆಯತನಕವೂ ತೋರಿಸಬೇಕೆಂದು ಹಾರೈಸುತ್ತೇನೆ.</verse>
				<verse number="12">ನೀವು ಆಲಸಿಗಳಾಗಿರಬಾರದು; ವಿಶ್ವಾಸದಿಂದಲೂ ಬಹು ತಾಳ್ಮೆಯಿಂದಲೂ ದೈವ ವಾಗ್ದಾನಗಳನ್ನು ಬಾಧ್ಯವಾಗಿಸಿಕೊಂಡವರನ್ನು ಅನುಸರಿಸಬೇಕು.</verse>
				<verse number="13">ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತಮ್ಮ ಮಾತನ್ನು ಈಡೇರಿಸುವುದಾಗಿ ಶಪಥಮಾಡಿದರು. ತಮಗಿಂತಲೂ ಮೇಲಾದವರಾರೂ ಇಲ್ಲವಾದ ಕಾರಣ ತಮ್ಮ ಸ್ವಂತ ಹೆಸರಿನಲ್ಲೇ ಶಪಥಮಾಡಿದರು.</verse>
				<verse number="14">“ಖಂಡಿತವಾಗಿಯೂ ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಹೆಚ್ಚಿಸಿಯೇ ತೀರುವೆನು,” ಎಂದರು.</verse>
				<verse number="15">ಅಂತೆಯೇ, ಅಬ್ರಹಾಮನು ದೀರ್ಘಕಾಲ ಕಾದಿದ್ದು ದೇವರ ವಾಗ್ದಾನದ ಫಲವನ್ನು ಪಡೆದನು.</verse>
				<verse number="16">ಮನುಷ್ಯರು ತಮಗಿಂತಲೂ ಹೆಚ್ಚಿನವರ ಮೇಲೆ ಆಣೆಯಿಡುವುದು ವಾಡಿಕೆ. ಹೀಗೆ ಆಣೆಯಿಟ್ಟು ಪ್ರಮಾಣಮಾಡಿದರೆ ಎಲ್ಲ ವಿವಾದಗಳು ಕೊನೆಗೊಳ್ಳುತ್ತವೆ.</verse>
				<verse number="17">ಹಾಗೆಯೇ, ದೇವರು ತಮ್ಮ ವಾಗ್ದಾನವನ್ನು ಬಾಧ್ಯವಾಗಿ ಪಡೆಯುವವರಿಗೆ ತಮ್ಮ ಸಂಕಲ್ಪ ಅಚಲವಾದುದು ಎಂಬುದನ್ನು ಸ್ಪಷ್ಟಪಡಿಸಲು, ಶಪಥಮಾಡಿ ಸ್ಥಿರಪಡಿಸಿದರು.</verse>
				<verse number="18">ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು.</verse>
				<verse number="19">ಈ ನಂಬಿಕೆ, ನಿರೀಕ್ಷೆ, ನಮ್ಮ ಬಾಳನೌಕೆಯ ಸ್ಥಿರವಾದ ಹಾಗೂ ಸುರಕ್ಷಿತವಾದ ಲಂಗರಿನಂತಿದೆ. ಇದು ತೆರೆಯ ಹಿಂದಿರುವ ಸ್ವರ್ಗೀಯ ಗರ್ಭಗುಡಿಯನ್ನು ಪ್ರವೇಶಿಸುವಂಥದ್ದು.</verse>
				<verse number="20">ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಪ್ರಧಾನಯಾಜಕರಾದ ಯೇಸು ನಮ್ಮ ಮುಂದಾಳಾಗಿ ಹೋಗಿ ಆ ಗರ್ಭಗುಡಿಯನ್ನು ಪ್ರವೇಶಿಸಿದ್ದಾರೆ.</verse>
			</chapter>
			<chapter number="7">
				<verse number="1">ಈ ಮೆಲ್ಕಿಸದೇಕನು ಸಾಲೇಮ್ ನಗರದ ರಾಜನೂ ಮಹೋನ್ನತ ದೇವರ ಯಾಜಕನೂ ಆಗಿದ್ದನು. ಶತ್ರುರಾಜರನ್ನು ಗೆದ್ದು ಹಿಂದಿರುಗುತ್ತಿದ್ದ ಅಬ್ರಹಾಮನನ್ನು ಈತನು ಎದುರುಗೊಂಡು ಆಶೀರ್ವದಿಸಿದನು.</verse>
				<verse number="2">ಆಗ ಅಬ್ರಹಾಮನು ತಾನು ಗೆದ್ದು ತಂದಿದ್ದ ಎಲ್ಲದರಲ್ಲೂ ದಶಮಾಂಶವನ್ನು ಆತನಿಗೆ ಕೊಟ್ಟು ಗೌರವಿಸಿದನು. ಮೆಲ್ಕಿಸದೇಕ ಎಂಬ ಹೆಸರಿನ ಮೂಲಾರ್ಥ, ‘ನ್ಯಾಯನೀತಿಯ ಅರಸ.’ ಅಲ್ಲದೆ, ಆತನು ಸಾಲೇಮಿನ ಅರಸನೂ ಆಗಿದ್ದನು. ಆದ್ದರಿಂದ ‘ಶಾಂತಿಸಮಾಧಾನದ ಅರಸ’ ಎಂಬ ಅರ್ಥವೂ ಉಂಟು.</verse>
				<verse number="3">ಆತನಿಗೆ ತಂದೆತಾಯಿಯಾಗಲಿ ವಂಶಾವಳಿಯಾಗಲಿ ಇಲ್ಲ. ಆತನ ಜನ್ಮಕ್ಕೆ ಆದಿಯಾಗಲಿ, ಜೀವನಕ್ಕೆ ಅಂತ್ಯವಾಗಲಿ ಇಲ್ಲ. ಆತನು ದೇವಪುತ್ರನನ್ನು ಹೋಲುತ್ತಾನೆ. ಶಾಶ್ವತ ಯಾಜಕನಾಗಿ ಉಳಿಯುತ್ತಾನೆ.</verse>
				<verse number="4">ನಮ್ಮ ಪಿತಾಮಹ ಅಬ್ರಹಾಮನೇ ತಾನು ಗೆದ್ದುತಂದ ಶ್ರೇಷ್ಠ ವಸ್ತುಗಳಲ್ಲಿ ದಶಮಾಂಶವನ್ನು ಈ ಮೆಲ್ಕಿಸದೇಕನಿಗೆ ಸಲ್ಲಿಸಿ ಗೌರವಿಸಬೇಕಾದರೆ ಆತನು ಎಂಥ ಮಹಾಪುರುಷನೆಂದು ನೀವೇ ಆಲೋಚಿಸಿ ನೋಡಿ.</verse>
				<verse number="5">ಲೇವಿಯ ಕುಲದವರಲ್ಲಿ ಯಾಜಕ ಪದವಿಯನ್ನು ಹೊಂದಿದವರು ಜನರಿಂದ, ಅಂದರೆ ಅಬ್ರಹಾಮನ ವಂಶಜರಾದ ತಮ್ಮ ಸ್ವಜನರಿಂದ, ದಶಮಾಂಶವನ್ನು ತೆಗೆದುಕೊಳ್ಳುವುದಕ್ಕೆ ಧರ್ಮಶಾಸ್ತ್ರದಲ್ಲಿ ಅಪ್ಪಣೆ ಉಂಟು.</verse>
				<verse number="6">ಆದರೆ ಲೇವಿಯ ಕುಲದವನಲ್ಲದ ಮೆಲ್ಕಿಸದೇಕನು ಅಬ್ರಹಾಮನಿಂದಲೇ ದಶಮಾಂಶವನ್ನು ಪಡೆದನು; ಮಾತ್ರವಲ್ಲದೆ, ದೇವರ ವಾಗ್ದಾನವನ್ನು ಪಡೆದ ಅಬ್ರಹಾಮನನ್ನೇ ಆಶೀರ್ವದಿಸಿದನು.</verse>
				<verse number="7">ಆಶೀರ್ವದಿಸುವವನು, ಆಶೀರ್ವಾದ ಪಡೆದವನಿಗಿಂತ ದೊಡ್ಡವನು ಎನ್ನುವುದು ನಿರ್ವಿವಾದ.</verse>
				<verse number="8">ಇದಲ್ಲದೆ, ದಶಮಾಂಶವನ್ನು ಪಡೆಯುತ್ತಿರುವ ಲೇವಿಯರು ಕೇವಲ ಮರ್ತ್ಯ ಮಾನವರು; ಅದನ್ನು ಪಡೆದ ಮೆಲ್ಕಿಸದೇಕನು ತಾನು ಅಮರ್ತ್ಯ ಯಾಜಕನೆಂದು ಸಾಕ್ಷ್ಯಾಧಾರ ಪಡೆದವನು.</verse>
				<verse number="9">ಅಷ್ಟೇ ಅಲ್ಲ, ದಶಮಾಂಶವನ್ನು ತೆಗೆದುಕೊಳ್ಳುತ್ತಿದ್ದ ಲೇವಿಯೂ ಕೂಡ ಅಬ್ರಹಾಮನ ಮುಖಾಂತರ ದಶಮಾಂಶವನ್ನು ತೆತ್ತನು ಎಂದು ಹೇಳಬಹುದು.</verse>
				<verse number="10">ಹೇಗೆಂದರೆ, ಮೆಲ್ಕಿಸದೇಕನು ಅಬ್ರಹಾಮನನ್ನು ಎದುರುಗೊಂಡಾಗ, ಲೇವಿಯು ಇನ್ನೂ ಹುಟ್ಟಿರಲಿಲ್ಲವಾದರೂ ತತ್ವಶಃ ಆತನು ತನ್ನ ಪೂರ್ವಜ ಅಬ್ರಹಾಮನ ಉದರದಲ್ಲಿದ್ದನು.</verse>
				<verse number="11">ಇಸ್ರಯೇಲರಿಗೆ ಕೊಡಲಾದ ಧರ್ಮಶಾಸ್ತ್ರ ಲೇವಿಯರ ಯಾಜಕತ್ವದ ಮೇಲೆಯೇ ಆಧಾರಗೊಂಡಿದೆ. ಲೇವಿಯರ ಈ ಯಾಜಕತ್ವದಿಂದಲೇ ಸಂಪೂರ್ಣ ಸಿದ್ಧಿ ಪ್ರಾಪ್ತವಾಗುತ್ತಿತ್ತಾದರೆ, ಆರೋನನ ಪರಂಪರೆಗೆ ಸೇರದೆ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಬೇರೊಬ್ಬ ಯಾಜಕನು ಕಾಣಿಸಿಕೊಳ್ಳುವ ಅವಶ್ಯಕತೆ ಏನಿತ್ತು?</verse>
				<verse number="12">ಯಾಜಕತ್ವ ಬದಲಾವಣೆಗೊಂಡರೆ ಧರ್ಮಶಾಸ್ತ್ರವೂ ಬದಲಾವಣೆಗೊಳ್ಳಬೇಕಾದುದು ಅಗತ್ಯ.</verse>
				<verse number="13">ಇದನ್ನೆಲ್ಲಾ ಯಾರನ್ನು ಕುರಿತು ಹೇಳಲಾಗಿದೆಯೋ ಆ ವ್ಯಕ್ತಿ ಹುಟ್ಟಿದ್ದು ಬೇರೊಂದು ಕುಲದಲ್ಲಿ. ಆ ಕುಲದಲ್ಲಿ ಎಂದೂ ಯಾರೂ ಬಲಿಪೀಠದ ಸೇವೆ ಮಾಡಿದವರಲ್ಲ.</verse>
				<verse number="14">ನಮ್ಮ ಪ್ರಭು ಹುಟ್ಟಿದ್ದು ಯೂದನ ಕುಲದಲ್ಲಿ ಎಂಬುದು ತಿಳಿದ ವಿಷಯ. ಮೋಶೆ ಯಾಜಕರನ್ನು ಕುರಿತು ಮಾತನಾಡಿದಾಗ ಈ ಕುಲದ ಬಗ್ಗೆ ಏನನ್ನೂ ಹೇಳಲಿಲ್ಲ.</verse>
				<verse number="15">ಹೀಗೆ ಕಾಣಿಸಿಕೊಂಡ ಯಾಜಕ ಮೆಲ್ಕಿಸದೇಕನನ್ನು ಹೋಲುವುದರಿಂದ ನಾವು ಹೇಳುವ ವಿಷಯ ಇನ್ನೂ ಸ್ಪಷ್ಟವಾಗುತ್ತದೆ.</verse>
				<verse number="16">ಇವರು ಯಾಜಕರಾದುದು ಅಳಿವಿಲ್ಲದ ಜೀವಶಕ್ತಿಯಿಂದ; ಕುಲಗೋತ್ರಗಳ ನಿಯಮಾನುಸಾರವಾದ ದೈಹಿಕ ಹುಟ್ಟಿನಿಂದಲ್ಲ.</verse>
				<verse number="17">“ನೀನು ಸದಾಕಾಲವೂ ಮೆಲ್ಕಿಸದೇಕನ ಪರಂಪರೆಗೆ ಸೇರಿದ ಯಾಜಕನು,” ಎಂದು ಪವಿತ್ರಗ್ರಂಥ ಸಮರ್ಥಿಸುತ್ತದೆ.</verse>
				<verse number="18">ಹಳೆಯ ಶಾಸನವು ಶಿಥಿಲವೂ ವಿಫಲವೂ ಆದಕಾರಣ, ಅದನ್ನು ರದ್ದುಗೊಳಿಸಲಾಯಿತು.</verse>
				<verse number="19">ಏಕೆಂದರೆ, ಧರ್ಮಶಾಸ್ತ್ರವು ಏನನ್ನೂ ಸಿದ್ಧಿಗೆ ತರಲಿಲ್ಲ. ಅದಕ್ಕೆ ಬದಲಾಗಿ ದೇವರ ಸನ್ನಿಧಿಗೆ ನಮ್ಮನ್ನು ಕೊಂಡೊಯ್ಯಬಲ್ಲ ನಂಬಿಕೆ ನಿರೀಕ್ಷೆಯನ್ನು ನಮಗೆ ಒದಗಿಸಲಾಗಿದೆ.</verse>
				<verse number="20">ಇದಲ್ಲದೆ, ಲೇವಿಯರು ಯಾಜಕರಾದಾಗ, ದೇವರು ಯಾವ ಶಪಥವನ್ನೂ ಮಾಡಲಿಲ್ಲ.</verse>
				<verse number="21">ಇವರಾದರೋ “ಎಂದೆಂದಿಗೂ ನೀ ಯಾಜಕನೆಂದು ಸರ್ವೇಶ್ವರನೇ ಪ್ರಮಾಣಿಸಿಹರು ಮನಸ್ಸನ್ನೆಂದೂ ಬದಲಾಯಿಸರವರು,” ಎಂಬ ಶಪಥ ಪಡೆದಿರುವ ಯಾಜಕರು.</verse>
				<verse number="22">ಆದ್ದರಿಂದಲೇ, ಯೇಸು ಅತ್ಯಂತ ಶ್ರೇಷ್ಠವಾದ ಒಡಂಬಡಿಕೆಗೆ ಆಧಾರಪುರುಷರಾಗಿದ್ದಾರೆ.</verse>
				<verse number="23">ಲೇವಿಯರ ಯಾಜಕಸೇವೆಯನ್ನು ಮರಣವು ಮೊಟಕುಗೊಳಿಸುತ್ತಿದ್ದುದರಿಂದ ಅನೇಕರು ಯಾಜಕರಾಗಬೇಕಾಗುತ್ತಿತ್ತು.</verse>
				<verse number="24">ಯೇಸುವಾದರೋ ಚಿರಂಜೀವಿಯಾದುದರಿಂದ ಅವರ ಯಾಜಕತ್ವವು ಶಾಶ್ವತವಾಗಿ ಉಳಿಯುವಂಥಾದ್ದು.</verse>
				<verse number="25">ಆದಕಾರಣ, ತಮ್ಮ ಮುಖಾಂತರ ದೇವರನ್ನು ಅರಸುವವರನ್ನು ಯೇಸು ಸಂಪೂರ್ಣವಾಗಿ ಉದ್ಧಾರಮಾಡಬಲ್ಲರು. ಅಂಥವರ ಪರವಾಗಿ ವಿಜ್ಞಾಪಿಸಲೆಂದೇ ಯೇಸು ಸದಾ ಬದುಕಿರುವರು.</verse>
				<verse number="26">ನಮಗೆ ಬೇಕಾಗಿದ್ದ ಪ್ರಧಾನ ಯಾಜಕರು ಯೇಸುವೇ. ಇವರು ಪರಿಶುದ್ಧರು, ನಿರ್ದೋಷಿ, ನಿಷ್ಕಳಂಕರು, ಪಾಪಿಗಳಿಂದ ಪ್ರತ್ಯೇಕಿಸಲಾದವರು, ಗಗನಮಂಡಲಗಳಿಗಿಂತಲೂ ಉನ್ನತದಲ್ಲಿರುವವರು.</verse>
				<verse number="27">ಇವರು ಮಿಕ್ಕ ಪ್ರಧಾನಯಾಜಕರಂತೆ ಮೊದಲು ಸ್ವಂತ ಪಾಪಗಳಿಗಾಗಿಯೂ ಅನಂತರ ಜನರ ಪಾಪಗಳಿಗಾಗಿಯೂ ದಿನಂಪ್ರತಿ ಪರಿಹಾರಬಲಿಯನ್ನು ಒಪ್ಪಿಸಬೇಕಾಗಿಲ್ಲ. ಏಕೆಂದರೆ, ಜನರ ಪಾಪಪರಿಹಾರಕ್ಕಾಗಿ ಒಮ್ಮೆಗೇ ಶಾಶ್ವತವಾಗಿ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಂಡರು.</verse>
				<verse number="28">ಧರ್ಮಶಾಸ್ತ್ರ ನೇಮಿಸುವ ಪ್ರಧಾನಯಾಜಕರು ಕುಂದುಕೊರತೆಯುಳ್ಳ ಮಾನವರು. ಆದರೆ, ಧರ್ಮಶಾಸ್ತ್ರದ ತರುವಾಯ ಬಂದ ಹಾಗೂ ಶಪಥದಿಂದ ಕೂಡಿದ ದೈವವಾಕ್ಯವು ಸದಾ ಸರ್ವಸಂಪೂರ್ಣರಾದ ಪುತ್ರನನ್ನೇ ಪ್ರಧಾನಯಾಜಕರನ್ನಾಗಿ ನೇಮಿಸುತ್ತದೆ.</verse>
			</chapter>
			<chapter number="8">
				<verse number="1">ಈಗ ಹೇಳುತ್ತಿರುವುದರ ಮುಖ್ಯಾಂಶ ಏನೆಂದರೆ: ಸ್ವರ್ಗದಲ್ಲಿ ಮಹೋನ್ನತ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನರಾಗಿರುವಂಥ ಪ್ರಧಾನಯಾಜಕ ನಮಗಿದ್ದಾರೆ.</verse>
				<verse number="2">ಅಲ್ಲಿ, ಆ ಪವಿತ್ರಸ್ಥಾನದಲ್ಲಿ ಮನುಷ್ಯರಿಂದಲ್ಲ, ದೇವರಿಂದಲೇ ನಿರ್ಮಿತವಾದ ನಿಜವಾದ ಗರ್ಭಗುಡಿಯಲ್ಲಿ, ಅವರು ಯಾಜಕ ಸೇವೆಯನ್ನು ಸಲ್ಲಿಸುತ್ತಿದ್ದಾರೆ.</verse>
				<verse number="3">ಪ್ರತಿಯೊಬ್ಬ ಪ್ರಧಾನಯಾಜಕನು ಕಾಣಿಕೆಗಳನ್ನೂ ಬಲಿಗಳನ್ನೂ ಅರ್ಪಿಸುವುದಕ್ಕಾಗಿಯೇ ನೇಮಕಗೊಂಡಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ನಮ್ಮ ಈ ಪ್ರಧಾನಯಾಜಕರಿಗೂ ಏನಾದರೂ ಇರಲೇಬೇಕು.</verse>
				<verse number="4">ಇವರು ಧರೆಯಲ್ಲೇ ಇದ್ದಿದ್ದರೆ ಯಾಜಕರಾಗಿರುತ್ತಿರಲಿಲ್ಲ. ಏಕೆಂದರೆ ಧರ್ಮಶಾಸ್ತ್ರ ವಿಧಿಸುವ ಕಾಣಿಕೆಗಳನ್ನು ಸಮರ್ಪಿಸುವುದಕ್ಕೆ ಬೇರೆ ಯಾಜಕರು ಇದ್ದಾರೆ.</verse>
				<verse number="5">ಸ್ವರ್ಗೀಯ ಗರ್ಭಗುಡಿಯ ಚಿಹ್ನೆ ಹಾಗೂ ಛಾಯೆಯಾಗಿರುವ ಆಲಯಗಳಲ್ಲಿ ಇಲ್ಲಿಯ ಯಾಜಕರು ಉಪಾಸನೆ ಮಾಡುತ್ತಾರೆ. ಮೋಶೆ ಗರ್ಭಗುಡಿಯನ್ನು ನಿರ್ಮಿಸಲು ಆರಂಭಿಸಿದಾಗ, ದೇವರು ಆತನಿಗೆ, “ಬೆಟ್ಟದ ಮೇಲೆ ನಾನು ತೋರಿಸಿದ ನಕ್ಷೆಯ ಪ್ರಕಾರವೇ ನೀನು ಎಲ್ಲವನ್ನೂ ನಿರ್ಮಿಸಬೇಕು,” ಎಂದು ಆಜ್ಞೆಯನ್ನಿತ್ತರು.</verse>
				<verse number="6">ಯೇಸು, ಆ ಯಾಜಕರ ಸೇವೆಗಿಂತಲೂ ಶ್ರೇಷ್ಠವಾದ ಯಾಜಕಸೇವೆಯನ್ನು ಕೈಗೊಂಡಿದ್ದಾರೆ. ಯೇಸುವನ್ನು ಮಧ್ಯಸ್ಥರನ್ನಾಗಿ ಪಡೆದಿರುವ ಒಡಂಬಡಿಕೆಯು ಅಷ್ಟೇ ಶ್ರೇಷ್ಠವಾದುದು. ಏಕೆಂದರೆ ಅದು, ಹಿಂದಿನ ವಾಗ್ದಾನಗಳಿಗಿಂತಲೂ ಉತ್ತಮವಾದ ವಾಗ್ದಾನಗಳನ್ನು ಆಧರಿಸಿದೆ.</verse>
				<verse number="7">ಮೊದಲನೆಯ ಒಡಂಬಡಿಕೆ ದೋಷರಹಿತ ಆಗಿದ್ದಿದ್ದರೆ, ಎರಡನೆಯ ಒಡಂಬಡಿಕೆಯ ಅವಶ್ಯಕತೆಯೇ ಇರುತ್ತಿರಲಿಲ್ಲ.</verse>
				<verse number="8">ಆದರೆ ದೇವರು ಆ ಒಡಂಬಡಿಕೆಗೆ ಸೇರಿದ ಜನರನ್ನು ಆರೋಪಿಸುತ್ತಾ ಇಂತೆಂದಿದ್ದಾರೆ: “ಇಗೋ, ನಾನು ಇಸ್ರಯೇಲ್ ವಂಶದವರೊಂದಿಗೂ ಯೆಹೂದ್ಯ ವಂಶದವರೊಂದಿಗೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ಕಾಲವು ಬರಲಿದೆ, ಎಂದರು ಸರ್ವೇಶ್ವರ.</verse>
				<verse number="9">ಈ ಒಡಂಬಡಿಕೆ, ನಾನು ಪೂರ್ವಜರನ್ನು ಈಜಿಪ್ಟ್ ದೇಶದಿಂದ ಕೈಹಿಡಿದು ಕರೆತಂದಾಗ ಮಾಡಿದ ಒಡಂಬಡಿಕೆಯಂತಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲ; ಎಂದೇ, ನಾನು ಅವರನ್ನು ಲಕ್ಷಿಸಲೂ ಇಲ್ಲ, ಎಂದರು ಸರ್ವೇಶ್ವರ.</verse>
				<verse number="10">ಆ ದಿನಗಳು ಬಂದಮೇಲೆ ಇಸ್ರಯೇಲ್ ವಂಶದವರೊಡನೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು, ಎಂದರು ಸರ್ವೇಶ್ವರ. ನಾಟಿಸುವೆನು ನನ್ನಾಜ್ಞೆಗಳನು ಅವರ ಮನದಲಿ ಬರೆಯುವೆನು ಅವುಗಳನು ಅವರ ಹೃದಯದಲಿ ದೇವನಾಗಿರುವೆನು ನಾನವರಿಗೆ ಅವರಾಗುವರು ಪ್ರಜೆಗಳು ನನಗೆ.</verse>
				<verse number="11">‘ಸರ್ವೇಶ್ವರನನ್ನು ಅರಿತುಕೊಳ್ಳಿರಿ’ ಎಂದು ನೆರೆಯವನಿಗಾಗಲಿ, ಸೋದರನಿಗಾಗಲಿ ಯಾರೂ ಬೋಧಿಸಬೇಕಾಗಿಲ್ಲ. ಹಿರಿಯಕಿರಿಯರು ಎಲ್ಲರೂ ನನ್ನನ್ನು ಅರಿಯುವರು.</verse>
				<verse number="12">ಅವರ ಪಾಪಗಳನ್ನು ಕ್ಷಮಿಸುವೆನು ಅವರ ತಪ್ಪುನೆಪ್ಪುಗಳನು ನೆನಪಿಗೆ ತಂದುಕೊಳ್ಳೆನು ಎಂದರು ಸರ್ವೇಶ್ವರ.”</verse>
				<verse number="13">ಇಲ್ಲಿ ‘ಹೊಸ ಒಡಂಬಡಿಕೆ’ ಎಂದು ಹೇಳಿ, ಹಿಂದಿನದನ್ನು ಹಳೆಯದಾಗಿಸಿದ್ದಾರೆ. ಹಳತಾದುದು ಹಾಗೂ ಮುದಿಯಾದುದು ಅಳಿದುಹೋಗುವಂಥಾದ್ದು.</verse>
			</chapter>
			<chapter number="9">
				<verse number="1">ಹಳೆಯ ಒಡಂಬಡಿಕೆಯಲ್ಲಿ ದೇವಾರಾಧನೆಗೆ ವಿಧಿನಿಯಮಗಳಿದ್ದವು; ಮಾನವ ನಿರ್ಮಿತ ದೇವಾಲಯವೂ ಇತ್ತು.</verse>
				<verse number="2">ಅಂದರೆ, ಒಂದು ಗುಡಾರವನ್ನು ಕಟ್ಟುತ್ತಿದ್ದರು. ಅದರಲ್ಲಿ ಎರಡು ಭಾಗಗಳು ಇದ್ದವು. ಮೊದಲನೆಯ ಭಾಗಕ್ಕೆ ಪವಿತ್ರಸ್ಥಳ ಎಂದು ಹೆಸರು. ಅಲ್ಲಿ, ಒಂದು ದೀಪಸ್ತಂಭ ಮತ್ತು ಒಂದು ಮೇಜು ಇದ್ದವು. ಆ ಮೇಜಿನ ಮೇಲೆ ಅರ್ಪಣೆಯ ನೈವೇದ್ಯ ರೊಟ್ಟಿಗಳನ್ನು ಇಡುತ್ತಿದ್ದರು.</verse>
				<verse number="3">ಅದರ ಎರಡನೆಯ ಭಾಗಕ್ಕೆ ಗರ್ಭಗುಡಿ ಎಂದು ಹೆಸರು. ಈ ಎರಡು ಭಾಗಗಳ ನಡುವೆ ತೆರೆಯಿತ್ತು. ಗರ್ಭಗುಡಿಯನ್ನು ಈ ತೆರೆ ಮರೆಮಾಡಿತ್ತು.</verse>
				<verse number="4">ಗರ್ಭಗುಡಿಯಲ್ಲಿ ಚಿನ್ನದ ಧೂಪಾರತಿ ಮತ್ತು ಚಿನ್ನದ ತಗಡನ್ನು ಸುತ್ತಲೂ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇದ್ದವು. ಈ ಮಂಜೂಷದಲ್ಲಿ ಮನ್ನವನ್ನು ಇಟ್ಟಿದ್ದ ಚಿನ್ನದ ಪಾತ್ರೆ ಆರೋನನ ಚಿಗುರಿದ ಕೋಲು ಮತ್ತು ಒಡಂಬಡಿಕೆಯ ಶಿಲಾಶಾಸನಗಳು ಇದ್ದವು.</verse>
				<verse number="5">ಮಂಜೂಷದ ಮೇಲೆ ದೇವರ ಸಾನ್ನಿಧ್ಯವನ್ನು ಸೂಚಿಸುವ ಕೆರೂಬಿ ಎಂಬ ದೂತರ ಆಕೃತಿಗಳಿದ್ದವು. ಅವುಗಳ ರೆಕ್ಕೆಗಳು ಕೃಪಾಸನವನ್ನು ಆವರಿಸಿಕೊಂಡಿದ್ದವು. ಸದ್ಯಕ್ಕೆ ಇವನ್ನು ಸವಿಸ್ತಾರವಾಗಿ ವಿವರಿಸಲು ಸಾಧ್ಯವಿಲ್ಲ.</verse>
				<verse number="6">ಹೀಗೆ ಇದೆಲ್ಲಾ ವ್ಯವಸ್ಥಿತವಾಗಿರಲು, ಯಾಜಕರು ಮೊದಲನೆಯ ಭಾಗವಾದ ಪವಿತ್ರಸ್ಥಳವನ್ನು ಮಾತ್ರ ಪ್ರವೇಶಿಸಿ, ಅಲ್ಲಿ ದೇವಾರಾಧನೆಯ ವಿಧಿಗಳನ್ನು ನಿರಂತರವಾಗಿ ನೆರವೇರಿಸುತ್ತಿದ್ದರು.</verse>
				<verse number="7">ಆದರೆ ಎರಡನೆಯ ಭಾಗವಾದ ಗರ್ಭಗುಡಿಯನ್ನು ಪ್ರಧಾನ ಯಾಜಕನೊಬ್ಬನೇ ಪ್ರವೇಶಿಸುತ್ತಿದ್ದನು; ಅದೂ ವರ್ಷಕ್ಕೆ ಒಮ್ಮೆ ಮಾತ್ರ. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಅವನು ಅಲ್ಲಿಗೆ ಹೋಗುವಂತಿರಲಿಲ್ಲ. ಆ ರಕ್ತವನ್ನು ತನಗಾಗಿಯೂ ಜನರು ತಿಳಿಯದೆ ಮಾಡಿದ ಅಪರಾಧಗಳಿಗಾಗಿಯೂ ಅರ್ಪಿಸಬೇಕಾಗಿತ್ತು.</verse>
				<verse number="8">ಈ ವ್ಯವಸ್ಥೆಯಲ್ಲಿ ಗುಡಾರದ ಮೊದಲನೆಯ ಭಾಗ ಇರುವ ತನಕ ಗರ್ಭಗುಡಿಯನ್ನು ಪ್ರವೇಶಿಸುವ ಮಾರ್ಗ ತೆರೆದಿರುವುದಿಲ್ಲ, ಎಂಬುದನ್ನು ಪವಿತ್ರಾತ್ಮ ಸಾಂಕೇತಿಕವಾಗಿ ತಿಳಿಯಪಡಿಸುತ್ತಾರೆ.</verse>
				<verse number="9">ಇವೆಲ್ಲವೂ ಈ ಕಾಲದ ಪರಿಸ್ಥಿತಿಗೆ ಒಂದು ನಿದರ್ಶನವಾಗಿವೆ. ಈ ವ್ಯವಸ್ಥೆಯ ಪ್ರಕಾರ ಸಮರ್ಪಣೆಯಾಗುತ್ತಿದ್ದ ಕಾಣಿಕೆಗಳೂ ಬಲಿಗಳೂ ಆರಾಧಕನ ಅಂತರಂಗವನ್ನು ಪೂರ್ಣವಾಗಿ ಶುದ್ಧಗೊಳಿಸಲು ಅಸಮರ್ಥವಾಗಿದ್ದವು.</verse>
				<verse number="10">ಏಕೆಂದರೆ, ಈ ಕಾಣಿಕೆಗಳು ಮತ್ತು ಬಲಿಗಳು ಕೇವಲ ಲೌಕಿಕವಾದುವು. ಅನ್ನಪಾನೀಯಗಳಿಂದಲೂ ನಾನಾ ತರದ ಸ್ನಾನವಿಧಿಗಳಿಂದಲೂ ಕೂಡಿದ ಇವು ಸುಧಾರಣೆಯ ಕಾಲದವರೆಗೆ ಮಾತ್ರ ಇರಬೇಕಾದುವು.</verse>
				<verse number="11">ಆದರೆ ಕ್ರಿಸ್ತಯೇಸು ಈಗಾಗಲೇ ಪ್ರಧಾನಯಾಜಕರಾಗಿ ಬಂದಿದ್ದಾರೆ. ಅವರು ಅನುಗ್ರಹಿಸುವ ಸತ್ಫಲಗಳು ಈಗಾಗಲೇ ನಮಗೆ ದೊರೆತಿವೆ. ಅವರು ಸೇವೆ ಸಲ್ಲಿಸುತ್ತಿರುವ ಗುಡಾರವು ಹಿಂದಿನವುಗಳಿಗಿಂತ ಶ್ರೇಷ್ಠವಾದುದು ಮತ್ತು ಪರಿಪೂರ್ಣವಾದುದು. ಇದು ಕೈಯಿಂದ ಕಟ್ಟಿದ್ದಲ್ಲ. ಇಹಲೋಕದ ಸೃಷ್ಟಿಗೆ ಸಂಬಂಧಪಟ್ಟಿದ್ದಲ್ಲ.</verse>
				<verse number="12">ಇಂಥ ಗರ್ಭಗುಡಿಯನ್ನು ಅವರು ಒಮ್ಮೆಗೇ ಶಾಶ್ವತವಾಗಿ ಪ್ರವೇಶಿಸಿದ್ದಾರೆ. ಹೋತಗಳ ಅಥವಾ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅವರು ಪ್ರವೇಶಿಸಲಿಲ್ಲ. ತಮ್ಮ ಸ್ವಂತ ರಕ್ತವನ್ನೇ ತೆಗೆದುಕೊಂಡು ಪ್ರವೇಶಿಸಿ ನಮಗೆ ಶಾಶ್ವತ ಜೀವೋದ್ಧಾರವು ದೊರಕುವಂತೆ ಮಾಡಿದ್ದಾರೆ.</verse>
				<verse number="13">ಹೋತಹೋರಿಗಳ ರಕ್ತವನ್ನೂ ಯಜ್ಞಪಶುಗಳ ಬೂದಿಯನ್ನೂ ಮಲಿನರಾದವರ ಮೇಲೆ ಚಿಮುಕಿಸುವುದರ ಮೂಲಕ ಶಾರೀರಕ ಮೈಲಿಗೆಯನ್ನು ಹೋಗಲಾಡಿಸಿ ಅವರನ್ನು ಪರಿಶುದ್ಧಗೊಳಿಸಬಹುದಾದರೆ,</verse>
				<verse number="14">ಯೇಸುವಿನ ರಕ್ತವು ಮತ್ತಷ್ಟು ಹೆಚ್ಚಾಗಿ ನಮ್ಮನ್ನು ಪರಿಶುದ್ಧಗೊಳಿಸುತ್ತದಲ್ಲವೇ? ನಿತ್ಯಾತ್ಮದ ಮೂಲಕ ಅವರು ತಮ್ಮನ್ನೇ ನಿಷ್ಕಳಂಕಬಲಿಯಾಗಿ ದೇವರಿಗೆ ಸಮರ್ಪಿಸಿದ್ದಾರೆ; ನಾವು ಜೀವಸ್ವರೂಪರಾದ ದೇವರನ್ನು ಆರಾಧಿಸುವಂತೆ, ಜಡಕರ್ಮಗಳಿಂದ ನಮ್ಮನ್ನು ಬಿಡುಗಡೆಮಾಡಿ ನಮ್ಮ ಅಂತರಂಗವನ್ನು ಪರಿಶುದ್ಧಗೊಳಿಸುತ್ತಾರೆ.</verse>
				<verse number="15">ಈ ಕಾರಣ, ಯೇಸು ಹೊಸ ಒಡಂಬಡಿಕೆಯನ್ನು ಏರ್ಪಡಿಸಿದ ಮಧ್ಯಸ್ಥರಾಗಿದ್ದಾರೆ. ದೈವಕರೆ ಹೊಂದಿದವರು ದೇವರು ವಾಗ್ದಾನಮಾಡಿದ ಅಮರ ಸೌಭಾಗ್ಯವನ್ನು ಬಾಧ್ಯವಾಗಿ ಪಡೆಯುವಂತೆ ಈ ಒಡಂಬಡಿಕೆಯನ್ನು ಏರ್ಪಡಿಸಲಾಯಿತು. ಇದು ಯೇಸುವಿನ ಮರಣದ ಮೂಲಕವೇ ಉಂಟಾಯಿತು. ಈ ಮರಣವು ಹಳೆಯ ಒಡಂಬಡಿಕೆಯನ್ನು ಮೀರಿ ಮಾಡಿದ ಅಪರಾಧಗಳನ್ನೂ ಪರಿಹರಿಸುತ್ತದೆ.</verse>
				<verse number="16">ಒಂದು ಮರಣ ಶಾಸನವು ಪರಿಣಾಮಕಾರಿಯಾಗಬೇಕಾದರೆ, ಅದನ್ನು ಬರೆದಾತನು ಸತ್ತಿದ್ದಾನೆಂಬುದು ಖಚಿತವಾಗಬೇಕು;</verse>
				<verse number="17">ಅವನು ಸತ್ತನಂತರ ಮಾತ್ರ ಆ ಶಾಸನವು ಕಾರ್ಯರೂಪಕ್ಕೆ ಬರುತ್ತದೆಯೇ ಹೊರತು ಅವನು ಜೀವದಿಂದ ಇರುವಾಗ ಅಲ್ಲ.</verse>
				<verse number="18">ಆದ್ದರಿಂದಲೇ, ಮೊದಲನೆಯ ಒಡಂಬಡಿಕೆ ಕೂಡ ರಕ್ತಧಾರೆ ಇಲ್ಲದೆ ಪ್ರತಿಷ್ಠಾಪನೆಗೊಳ್ಳಲಿಲ್ಲ.</verse>
				<verse number="19">ಮೋಶೆ ಧರ್ಮಶಾಸ್ತ್ರದ ಆಜ್ಞೆಗಳನ್ನೆಲ್ಲ ಸಾರಿ ಹೇಳಿ, ಹೋತ ಹಾಗೂ ಹೋರಿಕರುಗಳ ರಕ್ತವನ್ನು ತೆಗೆದುಕೊಂಡು ಅದಕ್ಕೆ ನೀರು ಬೆರೆಸಿದನು; ಅದನ್ನು ಕೆಂಪು ಉಣ್ಣೆಯ ನೂಲಿನಿಂದ ಕಟ್ಟಿದ ಹಿಸ್ಸೋಪ್ ಕಡ್ಡಿಗಳಿಂದ ಪವಿತ್ರಗ್ರಂಥದ ಮೇಲೂ ಜನರ ಮೇಲೂ ಚಿಮುಕಿಸಿದನು.</verse>
				<verse number="20">ಹೀಗೆ ಚಿಮುಕಿಸುವಾಗ, “ದೇವರು ನಿಮಗೆ ಆಜ್ಞಾಪಿಸಿರುವ ಒಡಂಬಡಿಕೆಯ ರಕ್ತವಿದು,” ಎಂದು ಹೇಳಿದನು.</verse>
				<verse number="21">ಅಂತೆಯೇ ಗುಡಾರದ ಮೇಲೂ ದೇವಾರಾಧನೆಗೆ ಬೇಕಾದ ಎಲ್ಲಾ ಪೂಜಾಸಾಮಗ್ರಿಗಳ ಮೇಲೂ ಆ ರಕ್ತವನ್ನು ಚಿಮುಕಿಸಿದನು.</verse>
				<verse number="22">ಎಂದೇ, ಧರ್ಮಶಾಸ್ತ್ರದ ಪ್ರಕಾರ ಹೆಚ್ಚುಕಡಿಮೆ ಎಲ್ಲವೂ ರಕ್ತದಿಂದಲೇ ಶುದ್ಧೀಕರಣ ಹೊಂದುತ್ತವೆ. ರಕ್ತಧಾರೆ ಇಲ್ಲದೆ ಪಾಪಪರಿಹಾರವಿಲ್ಲ.</verse>
				<verse number="23">ಸ್ವರ್ಗೀಯವಾದವುಗಳ ಛಾಯೆಯಂತೆ ಇರುವ ಈ ವಸ್ತುಗಳೇ ಈ ಪ್ರಕಾರ ಶುದ್ಧೀಕರಣ ಹೊಂದಬೇಕಾಗಿತ್ತಾದರೆ, ನಿಜವಾಗಿ ಸ್ವರ್ಗೀಯವಾದವುಗಳ ಶುದ್ಧೀಕರಣಕ್ಕೆ ಮತ್ತಷ್ಟು ಶ್ರೇಷ್ಠವಾದ ಬಲಿಗಳು ಬೇಕಾಗಿತ್ತು.</verse>
				<verse number="24">ಕ್ರಿಸ್ತಯೇಸು ಪ್ರವೇಶಿಸಿದ್ದು ನೈಜದೇವಾಲಯದ ಛಾಯೆಯಂತಿರುವ ಮಾನವನಿರ್ಮಿತ ಗರ್ಭಗುಡಿಯನ್ನಲ್ಲ, ನಮ್ಮ ಪರವಾಗಿ ದೇವರ ಸಮ್ಮುಖದಲ್ಲಿ ಉಪಸ್ಥಿತರಾಗಲು ಸಾಕ್ಷಾತ್ ಸ್ವರ್ಗವನ್ನೇ ಅವರು ಪ್ರವೇಶಿಸಿದರು.</verse>
				<verse number="25">ಪ್ರಧಾನ ಯಾಜಕನು ಪ್ರತಿವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಗರ್ಭಗುಡಿಯನ್ನು ಪ್ರವೇಶಿಸುವಂತೆ ಯೇಸು ಪ್ರವೇಶಿಸಲಿಲ್ಲ. ಅವರು ಸ್ವರ್ಗವನ್ನು ಪ್ರವೇಶಿಸಿದ್ದು ಪದೇಪದೇ ತಮ್ಮನ್ನು ಸಮರ್ಪಿಸಿಕೊಳ್ಳುವುದಕ್ಕೂ ಅಲ್ಲ.</verse>
				<verse number="26">ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಲೋಕಾದಿಯಿಂದಲೂ ಅವರು ಅನೇಕ ಸಾರಿ ಮರಣಯಾತನೆಯನ್ನು ಅನುಭವಿಸಬೇಕಾಗಿ ಬರುತ್ತಿತ್ತು; ಅದಕ್ಕೆ ಬದಲಾಗಿ ಯುಗಾಂತ್ಯವಾದ ಈ ಕಾಲದಲ್ಲಿ ಪಾಪನಿವಾರಣೆ ಮಾಡಬೇಕೆಂಬ ಉದ್ದೇಶದಿಂದ ಒಮ್ಮೆಗೇ ತಮ್ಮನ್ನು ತಾವೇ ಬಲಿಯಾಗಿ ಸಮರ್ಪಿಸಿಕೊಳ್ಳಲೆಂದು ಯೇಸು ಪ್ರತ್ಯಕ್ಷರಾದರು.</verse>
				<verse number="27">ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.</verse>
				<verse number="28">ಹಾಗೆಯೇ, ಎಲ್ಲಾ ಮಾನವರ ಪಾಪಗಳನ್ನು ಹೊತ್ತು ಹೋಗಲಾಡಿಸಲು ಕ್ರಿಸ್ತಯೇಸು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮನ್ನೇ ಬಲಿಯಾಗಿ ಸಮರ್ಪಿಸಿಕೊಂಡರು. ಅವರು ಮತ್ತೆ ಪ್ರತ್ಯಕ್ಷರಾಗುವರು; ಪಾಪನಿವಾರಣೆ ಮಾಡಲೆಂದು ಅಲ್ಲ, ತಮ್ಮನ್ನು ನಂಬಿ ನಿರೀಕ್ಷಿಸಿಕೊಂಡಿರುವವರನ್ನು ಜೀವೋದ್ಧಾರ ಮಾಡಲೆಂದು.</verse>
			</chapter>
			<chapter number="10">
				<verse number="1">ಧರ್ಮಶಾಸ್ತ್ರವು ಬರಲಿದ್ದ ಸೌಭಾಗ್ಯದ ಛಾಯೆಯೇ ಹೊರತು ಅದರ ನಿಜಸ್ವರೂಪವಲ್ಲ. ವರ್ಷವರ್ಷವೂ ನಿರಂತರವಾಗಿ ಅದೇ ಬಲಿಗಳು ಅರ್ಪಿತವಾಗುತ್ತಿವೆ. ಹೀಗಿರುವಲ್ಲಿ, ದೇವರನ್ನು ಅರಸಿ ಬರುತ್ತಿರುವವರನ್ನು ಇಂಥ ಬಲಿಗಳಿಂದ ಸಿದ್ಧಿಗೆ ತರಲು ಹೇಗೆ ತಾನೆ ಸಾಧ್ಯ?</verse>
				<verse number="2">ಹಾಗೆ ಸಿದ್ಧಿಗೆ ತರಲು ಸಾಧ್ಯವಿದ್ದಿದ್ದರೆ ಬಲಿಯರ್ಪಣೆಯು ಎಂದೋ ನಿಂತುಹೋಗುತ್ತಿತ್ತು. ಏಕೆಂದರೆ, ಆಗ ಆರಾಧಕರು ಒಮ್ಮೆಗೇ ಶುದ್ಧಿಹೊಂದಿ ತಾವು ಪಾಪಿಗಳೆಂಬ ಮನವರಿಕೆಯೇ ಇಲ್ಲದೆ ಇರುತ್ತಿದ್ದರು.</verse>
				<verse number="3">ಬದಲಿಗೆ, ಪ್ರತಿವರ್ಷವೂ ಸಮರ್ಪಿಸಲಾಗುವ ಬಲಿಯರ್ಪಣೆಗಳು ಪಾಪನಿವಾರಣೆ ಆಗದ್ದನ್ನು ಜ್ಞಾಪಕಕ್ಕೆ ತರುತ್ತವೆ.</verse>
				<verse number="4">ಏಕೆಂದರೆ, ಹೋತ, ಹೋರಿಗಳ ರಕ್ತದಿಂದ ಪಾಪನಿವಾರಣೆ ಅಸಾಧ್ಯ.</verse>
				<verse number="5">ಆದ್ದರಿಂದಲೇ ಭೂಲೋಕಕ್ಕೆ ಬರಲಿದ್ದ ಕ್ರಿಸ್ತಯೇಸು ದೇವರಿಗೆ ಇಂತೆಂದರು: “ಬಲಿಯರ್ಪಣೆಗಳೂ ಕಾಣಿಕೆಗಳೂ ನಿಮಗೆ ಬೇಡವಾದವು ಎಂದೇ ಅಣಿಮಾಡಿ ಕೊಟ್ಟಿರಿ ನನಗೆ ದೇಹವೊಂದನು.</verse>
				<verse number="6">ಸರ್ವಾಂಗ ಹೋಮಗಳೂ ಪಾಪಪರಿಹಾರಕ ಬಲಿಗಳೂ ನಿಮಗೆ ತರಲಿಲ್ಲ ತೃಪ್ತಿಯನು.</verse>
				<verse number="7">ಆಗ ಇಂತೆಂದೆ ನಾನು: ಗ್ರಂಥದ ಸುರುಳಿಯಲಿ ನನ್ನನ್ನು ಕುರಿತು ಬರೆದಿರುವಂತೆ, ಓ ದೇವಾ, ಇಗೋ ನಾ ಬಂದೆ ನಿನ್ನ ಚಿತ್ತವನು ನೆರವೇರಿಸಲೆಂದೇ.”</verse>
				<verse number="8">ಧರ್ಮಶಾಸ್ತ್ರದ ವಿಧಿಗನುಸಾರ ಅರ್ಪಿಸಲಾಗುತ್ತಿದ್ದುವಾದರೂ “ಬಲಿಯರ್ಪಣೆಗಳು, ಕಾಣಿಕೆಗಳು, ದಹನಬಲಿಗಳು ಮತ್ತು ಪಾಪಪರಿಹಾರಕಬಲಿಗಳು ನಿಮಗೆ ಬೇಡವಾದವು; ಇವು ಯಾವುವು ನಿಮಗೆ ತರಲಿಲ್ಲ ತೃಪ್ತಿಯನು,” ಎಂದು ಮೊದಲು ಹೇಳುತ್ತಾರೆ.</verse>
				<verse number="9">ಅನಂತರ, “ಇಗೋ, ನಾ ಬಂದೆ ನಿಮ್ಮ ಚಿತ್ತವನು ನೆರವೇರಿಸಲೆಂದೇ,” ಎನ್ನುತ್ತಾರೆ. ಹೀಗೆ ಹೊಸದನ್ನು ಸ್ಥಾಪಿಸಲು ಹಳೆಯದನ್ನು ರದ್ದುಮಾಡಿದ್ದಾರೆ.</verse>
				<verse number="10">ಯೇಸುಕ್ರಿಸ್ತರು ಒಮ್ಮೆಗೇ ಎಲ್ಲಾ ಕಾಲಕ್ಕೂ ತಮ್ಮ ದೇಹವನ್ನು ಸಮರ್ಪಿಸಿ, ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಪುನೀತರಾಗಿದ್ದೇವೆ.</verse>
				<verse number="11">ಪ್ರತಿಯೊಬ್ಬ ಯಾಜಕನು ಅನುದಿನವೂ ತನ್ನ ಸೇವೆಯನ್ನು ನಿರ್ವಹಿಸುತ್ತಾನೆ. ಆದರೆ ಇವುಗಳಿಂದ ಎಂದಿಗೂ ಪಾಪನಿವಾರಣೆ ಆಗದು.</verse>
				<verse number="12">ಕ್ರಿಸ್ತಯೇಸು ಪಾಪನಿವಾರಣೆಗೆಂದು ಎಲ್ಲಾ ಕಾಲಕ್ಕೂ ಏಕೈಕ ಬಲಿಯನ್ನು ಅರ್ಪಿಸಿ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ.</verse>
				<verse number="13">ಅವರ ಶತ್ರುಗಳು ತಮ್ಮ ಕಾಲಡಿಗೆ ಬರುವತನಕ ಅಲ್ಲೇ ಕಾದಿರುತ್ತಾರೆ.</verse>
				<verse number="14">ತಾವು ಪುನೀತಗೊಳಿಸಿದವರನ್ನು ಒಂದೇ ಒಂದು ಬಲಿಯರ್ಪಣೆಯಿಂದ ಯೇಸು ನಿರಂತರ ಸಿದ್ಧಿಗೆ ತಂದಿದ್ದಾರೆ.</verse>
				<verse number="15">ಇದನ್ನು ಕುರಿತು ಪವಿತ್ರಾತ್ಮರು ಕೂಡ ನಮಗೆ ಸಾಕ್ಷಿಕೊಡುತ್ತಾರೆ:</verse>
				<verse number="16">“ಆ ದಿನಗಳು ಬಂದಮೇಲೆ ನಾನು ಅವರೊಡನೆ ಮಾಡಿಕೊಳ್ಳುವ ಒಡಂಬಡಿಕೆ ಹೀಗಿರುವುದು: ನನ್ನ ಆಜ್ಞೆಗಳನ್ನು ಅವರ ಹೃದಯದಲ್ಲಿ ನಾಟಿಸುವೆನು; ಅವರ ಮನದಲ್ಲಿ ಬರೆಯುವೆನು.” ಎಂದು ಹೇಳಿದ ನಂತರವೇ,</verse>
				<verse number="17">“ಅವರ ಪಾಪಗಳನ್ನೂ ತಪ್ಪುನೆಪ್ಪುಗಳನ್ನೂ ನೆನಪಿಗೆ ತಂದುಕೊಳ್ಳೆನು,” ಎಂದಿದ್ದಾರೆ.</verse>
				<verse number="18">ಪಾಪಗಳ ಕ್ಷಮಾಪಣೆಯಾದ ಬಳಿಕ ಪಾಪಪರಿಹಾರಕಬಲಿಯ ಅವಶ್ಯಕತೆ ಇಲ್ಲ.</verse>
				<verse number="19">ಹೀಗಿರುವಲ್ಲಿ, ಪ್ರಿಯ ಸಹೋದರರೇ, ಯೇಸುಸ್ವಾಮಿ ತಮ್ಮ ದೇಹವೆಂಬ ತೆರೆಯ ಮೂಲಕ ನಮಗೆ ಹೊಸದಾದ ಸಜ್ಜೀವಮಾರ್ಗವನ್ನು ತೆರೆದಿಟ್ಟಿದ್ದಾರೆ.</verse>
				<verse number="20">ಅದರ ಮೂಲಕ ಗರ್ಭಗುಡಿಯನ್ನು ಧೈರ್ಯದಿಂದ ಪ್ರವೇಶಿಸುವ ಹಕ್ಕು ಅವರ ರಕ್ತಧಾರೆಯಿಂದಲೇ ನಮಗೆ ದೊರೆತಿದೆ.</verse>
				<verse number="21">ದೇವರ ಮನೆತನದ ಮೇಲೆ ಅಧಿಕಾರವಿರುವ ಶ್ರೇಷ್ಠಯಾಜಕ ನಮಗಿದ್ದಾರೆ.</verse>
				<verse number="22">ಆದಕಾರಣ, ನಾವು ಕೆಟ್ಟ ಮನಸ್ಸಾಕ್ಷಿಯನ್ನು ತೊರೆದ ಹೃದಯದಿಂದಲೂ ಪುಣ್ಯಜಲದಿಂದ ತೊಳೆದ ದೇಹದಿಂದಲೂ ಕೂಡಿದವರಾಗಿ ಶುದ್ಧ ಅಂತರಂಗದಿಂದಲೂ ಪೂರ್ಣವಿಶ್ವಾಸದಿಂದಲೂ ದೇವರ ಬಳಿಗೆ ಸಾಗೋಣ.</verse>
				<verse number="23">ಕೊಟ್ಟ ಮಾತನ್ನು ದೇವರು ಮೀರುವುದಿಲ್ಲ. ಆದ್ದರಿಂದ ನಾವು ನಿವೇದಿಸುವ ನಂಬಿಕೆ ನಿರೀಕ್ಷೆಯಲ್ಲಿ ಚಂಚಲರಾಗದೆ ಸದೃಢರಾಗಿರೋಣ.</verse>
				<verse number="24">ಪರಸ್ಪರ ಹಿತಚಿಂತಕರಾಗಿರೋಣ; ಪ್ರೀತಿಸಬೇಕು, ಒಳಿತನ್ನು ಮಾಡಬೇಕು ಎಂದು ಒಬ್ಬರನ್ನೊಬ್ಬರು ಹುರಿದುಂಬಿಸೋಣ.</verse>
				<verse number="25">ಸಭೆ ಸೇರುವ ರೂಢಿಯನ್ನು ಕೆಲವರು ಕೈಬಿಟ್ಟಿದ್ದಾರೆ. ನಾವು ಹಾಗೆ ಮಾಡದಿರೋಣ. ನಿಮಗೆ ತಿಳಿದಿರುವಂತೆ ಪ್ರಭು ಪ್ರತ್ಯಕ್ಷರಾಗುವ ದಿನವು ಸಮೀಪಿಸುತ್ತಿರುವುದರಿಂದ ಮತ್ತಷ್ಟು ಹೆಚ್ಚಾಗಿ ಒಬ್ಬರನ್ನೊಬ್ಬರು ಪ್ರೋತ್ಸಾಹಿಸೋಣ.</verse>
				<verse number="26">ನಾವು ಸತ್ಯವನ್ನು ಅರಿತವರಾದ ಮೇಲೂ ಬೇಕುಬೇಕಾಗಿ ಪಾಪಮಾಡುತ್ತಲೇ ಇದ್ದರೆ, ಪಾಪಪರಿಹಾರಕ್ಕೆ ಇನ್ನು ನಮಗೆ ಬೇರೆ ಯಾವ ಬಲಿಯೂ ಇರುವುದಿಲ್ಲ;</verse>
				<verse number="27">ಬದಲಿಗೆ, ಅತ್ಯಂತ ಭಯದಿಂದ ಎದುರುನೋಡಬೇಕಾದ ದಂಡನಾತೀರ್ಪು ಹಾಗೂ ದೇವರ ಶತ್ರುಗಳನ್ನು ದಹಿಸುವ ಉಗ್ರಕೋಪಾಗ್ನಿ - ಇವುಗಳು ಮಾತ್ರ ನಮಗೆ ಉಳಿದಿರುತ್ತವೆ.</verse>
				<verse number="28">ಮೋಶೆಯ ಆಜ್ಞಾವಿಧಿಗಳನ್ನು ಉಲ್ಲಂಘಿಸಿದವನು, ಇಬ್ಬರು ಅಥವಾ ಮೂವರು ಸಾಕ್ಷಿಗಳು ನೀಡುವ ಸಾಕ್ಷ್ಯದ ಆಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆಗೆ ಗುರಿ ಆಗುತ್ತಾನೆ.</verse>
				<verse number="29">ಹೀಗಿರುವಲ್ಲಿ, ದೇವರ ಪುತ್ರನನ್ನು ತುಚ್ಛೀಕರಿಸುವವನೂ ತನ್ನನ್ನು ಶುದ್ಧೀಕರಿಸಿದ ಹಾಗು ಒಡಂಬಡಿಕೆಯನ್ನು ಸ್ಥಿರಪಡಿಸುವ ರಕ್ತವನ್ನು ತೃಣೀಕರಿಸುವವನೂ ವರಪ್ರಸಾದವನ್ನು ತರುವ ಪವಿತ್ರಾತ್ಮ ಅವರನ್ನು ತಿರಸ್ಕರಿಸುವವನೂ ಎಂಥಾ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ!</verse>
				<verse number="30">“ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ; ನಾನೇ ಪ್ರತೀಕಾರವನ್ನು ಸಲ್ಲಿಸುವೆನು,” ಎಂದು ಹೇಳಿದವರು ಯಾರೆಂದು ಬಲ್ಲೆವು. ಅಲ್ಲದೆ, “ಸರ್ವೇಶ್ವರ ತಮ್ಮ ಪ್ರಜೆಗಳಿಗೆ ನ್ಯಾಯತೀರ್ಪನ್ನು ನೀಡುವರು,” ಎಂದೂ ಹೇಳಲಾಗಿದೆ.</verse>
				<verse number="31">ಜೀವಸ್ವರೂಪರಾದ ದೇವರ ಕೈಯಲ್ಲಿ ಸಿಕ್ಕಿಬೀಳುವುದು ಅದೆಷ್ಟು ಭಯಂಕರ!</verse>
				<verse number="32">ನಿಮ್ಮ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿ: ನಿಮಗೆ ಜ್ಞಾನೋದಯವಾದ ತರುವಾಯ, ಕಷ್ಟಸಂಕಟಗಳಿಂದ ಕೂಡಿದ ಹೋರಾಟವನ್ನು ಎದುರಿಸಿದಿರಿ!</verse>
				<verse number="33">ಕೆಲವೊಮ್ಮೆ ಬಹಿರಂಗವಾಗಿ ಹಿಂಸೆಬಾಧೆಗಳಿಗೂ ನಿಂದೆ ಅವಮಾನಗಳಿಗೂ ಗುರಿಯಾದಿರಿ; ಮತ್ತೆ ಕೆಲವೊಮ್ಮೆ ನಿಮ್ಮಂತೆ ಸಂಕಟಪಡುವವರ ಸಂಗಡ ಸಹಭಾಗಿಗಳಾದಿರಿ;</verse>
				<verse number="34">ಸೆರೆಯಾಳುಗಳಿಗೆ ಸಂತಾಪ ತೋರಿಸಿದಿರಿ, ನಿಮ್ಮ ಸೊತ್ತನ್ನು ಸುಲಿಗೆಮಾಡಿದಾಗ ಸಂತೋಷದಿಂದ ಬಿಟ್ಟುಕೊಟ್ಟಿರಿ. ಏಕೆಂದರೆ, ಇದಕ್ಕೂ ಶ್ರೇಷ್ಠವಾದ ಹಾಗೂ ಶಾಶ್ವತವಾದ ಸೊತ್ತು ನಿಮಗಿದೆಯೆಂದು ಚೆನ್ನಾಗಿ ಅರಿತಿದ್ದಿರಿ.</verse>
				<verse number="35">ಆ ದೃಢ ನಂಬಿಕೆಯನ್ನು ಕಳೆದುಕೊಳ್ಳಬೇಡಿ; ಅದರ ಪ್ರತಿಫಲ ಮಹತ್ತಾದುದು.</verse>
				<verse number="36">ದೇವರ ಚಿತ್ತವನ್ನು ನೆರವೇರಿಸಿ, ಅವರು ವಾಗ್ದಾನಮಾಡಿರುವುದನ್ನು ಪಡೆದುಕೊಳ್ಳುವಂತೆ, ನೀವೂ ದೃಢಮನಸ್ಕರಾಗಿರಬೇಕು.</verse>
				<verse number="37">ಏಕೆಂದರೆ: “ಇನ್ನು ಅಲ್ಪ, ಅತ್ಯಲ್ಪ ಕಾಲದಲ್ಲೇ ಬರುವಾತನು ಬಂದೇ ಬರುವನು, ವಿಳಂಬಮಾಡನು.</verse>
				<verse number="38">ಸಜ್ಜನರಾದ ನನ್ನ ಭಕ್ತರು ವಿಶ್ವಾಸದಿಂದಲೇ ಬಾಳುವರು ಅವರು ಹಿಂಜರಿದರಾದರೆ ಮೆಚ್ಚೆನು ನಾನವರನು,” ಎನ್ನುತ್ತದೆ ಪವಿತ್ರಗ್ರಂಥ.</verse>
				<verse number="39">ಆದರೆ ನಾವು ಹಿಮ್ಮೆಟ್ಟಿ ಹಾಳಾಗುವ ಜನರಲ್ಲ; ವಿಶ್ವಾಸವುಳ್ಳವರಾಗಿ ಜೀವೋದ್ಧಾರವನ್ನು ಪಡೆಯುವವರು.</verse>
			</chapter>
			<chapter number="11">
				<verse number="1">ವಿಶ್ವಾಸವೆಂಬುದು ನಾವು ನಿರೀಕ್ಷಿಸುವಂಥವುಗಳು ನಮಗೆ ದೊರಕುತ್ತವೆ ಎಂಬ ದೃಢ ನಂಬಿಕೆ ಹಾಗು ಕಣ್ಣಿಗೆ ಕಾಣದಂಥವುಗಳು ನಿಶ್ಚಯವಾದವು ಎಂಬ ನಿಲುವು ಆಗಿದೆ.</verse>
				<verse number="2">ನಮ್ಮ ಪೂರ್ವಜರು ದೈವಸಮ್ಮತಿಯನ್ನು ಪಡೆದದ್ದು ವಿಶ್ವಾಸದಿಂದಲೇ;</verse>
				<verse number="3">ವಿಶ್ವವು ದೇವರ ವಾಣಿಯಿಂದ ಉಂಟಾಯಿತು ಎಂಬುದನ್ನು ಮತ್ತು ಗೋಚರವಾದವುಗಳು ಅಗೋಚರವಾದವುಗಳಿಂದ ಉಂಟಾದವು ಎಂಬುದನ್ನು ವಿಶ್ವಾಸದಿಂದಲೇ ತಿಳಿಯುತ್ತೇವೆ.</verse>
				<verse number="4">ವಿಶ್ವಾಸವಿದ್ದುದರಿಂದಲೇ ಹೇಬೆಲನು ಕಾಯಿನನಿಗಿಂತ ಉತ್ತಮವಾದ ಬಲಿಯನ್ನು ದೇವರಿಗೆ ಸಮರ್ಪಿಸಿದನು. ವಿಶ್ವಾಸದಿಂದಲೇ ತಾನು ಸತ್ಪುರುಷನೆಂದು ಸನ್ಮಾನಿತನಾದನು. ಅವನ ಕಾಣಿಕೆ ತಮಗೆ ಸ್ವೀಕೃತವಾಯಿತೆಂದು ದೇವರೇ ಸಾದರಪಡಿಸಿದರು. ಅವನು ಮೃತನಾಗಿದ್ದರೂ ಅವನ ವಿಶ್ವಾಸದ ಮೂಲಕ ಇಂದಿಗೂ ಮಾತನಾಡುತ್ತಿದ್ದಾನೆ.</verse>
				<verse number="5">ವಿಶ್ವಾಸವಿದ್ದುದರಿಂದಲೇ ಹನೋಕನು ಮೃತ್ಯುವಿಗೆ ತುತ್ತಾಗದಂತೆ ದೇವರ ಬಳಿಗೆ ಒಯ್ಯಲ್ಪಟ್ಟನು. ದೇವರು ಆತನನ್ನು ಕರೆದುಕೊಂಡಿದ್ದರಿಂದ ಆತನು ಯಾರಿಗೂ ಕಾಣಸಿಗಲಿಲ್ಲ. ಆತನು ಹೀಗೆ ಒಯ್ಯಲ್ಪಡುವುದಕ್ಕೆ ಮುಂಚೆ ದೇವರಿಗೆ ಮೆಚ್ಚುಗೆಯಾಗಿದ್ದನು ಎಂಬುದಕ್ಕೆ ಸಾಕ್ಷ್ಯಾಧಾರವಿದೆ.</verse>
				<verse number="6">ವಿಶ್ವಾಸವಿಲ್ಲದೆ ದೇವರ ಮೆಚ್ಚುಗೆಗೆ ಪಾತ್ರರಾಗಲು ಯಾರಿಂದಲೂ ಸಾಧ್ಯವಿಲ್ಲ. ದೇವರ ಬಳಿಗೆ ಸಾಗುವವರು, ಅವರ ಅಸ್ತಿತ್ವವನ್ನು ವಿಶ್ವಾಸಿಸಬೇಕು; ಅವರನ್ನು ಅರಸುವವರಿಗೆ ತಕ್ಕ ಪ್ರತಿಫಲ ಸಿಗುವದೆಂದು ನಂಬಬೇಕು.</verse>
				<verse number="7">ವಿಶ್ವಾಸವಿದ್ದುದರಿಂದಲೇ ನೋವನು ಕಾಣದೆ ಇದ್ದ ತನ್ನ ಭವಿಷ್ಯದ ಬಗ್ಗೆ ದೇವರಿಂದ ಮುನ್ನೆಚ್ಚರಿಕೆ ಪಡೆದಾಗ ಅದನ್ನು ಲಕ್ಷ್ಯಕ್ಕೆ ತಂದುಕೊಂಡು ಕುಟುಂಬವನ್ನು ರಕ್ಷಿಸಿಕೊಳ್ಳಲು ನಾವೆಯೊಂದನ್ನು ನಿರ್ಮಿಸಿದನು. ಇಡೀ ಜಗತ್ತೇ ದಂಡನೆಗೆ ಗುರಿಯಾಯಿತು. ನೋವನಾದರೋ ತನ್ನ ವಿಶ್ವಾಸದ ಫಲವಾಗಿ ಸತ್ಸಂಬಂಧಕ್ಕೆ ಬಾಧ್ಯಸ್ಥನಾದನು.</verse>
				<verse number="8">ಅಬ್ರಹಾಮನು ದೇವರ ಕರೆಗೆ ಓಗೊಡುವುದಕ್ಕೂ ವಿಶ್ವಾಸವೇ ಕಾರಣವಾಗಿತ್ತು. ಆತನು ಆ ಕರೆಗನುಸಾರವಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ನಾಡಿಗೆ ಹೊರಟನು. ತಾನು ಸೇರಬೇಕಾಗಿದ್ದ ಸ್ಥಳ ಯಾವುದೆಂದು ತಿಳಿಯದಿದ್ದರೂ ಸ್ವದೇಶವನ್ನು ಬಿಟ್ಟು ತೆರಳಿದನು.</verse>
				<verse number="9">ದೇವರು ವಾಗ್ದಾನ ಮಾಡಿದ ನಾಡಿಗೆ ಬಂದಾಗಲೂ ಆತನು ಅದೇ ವಿಶ್ವಾಸದ ನಿಮಿತ್ತ ಒಬ್ಬ ಅನ್ಯದೇಶಿಯನಂತೆ ಬಾಳಿದನು. ಡೇರೆಗಳಲ್ಲಿದ್ದುಕೊಂಡು ಒಬ್ಬ ಪ್ರವಾಸಿಗನಂತೆ ಜೀವಿಸಿದನು. ಅದೇ ವಾಗ್ದಾನಕ್ಕೆ ಸಹಬಾಧ್ಯಸ್ಥರಾದ ಇಸಾಕನೂ ಯಕೋಬನೂ ಅವನಂತೆಯೇ ಡೇರೆಗಳಲ್ಲಿ ವಾಸಿಸಿದರು.</verse>
				<verse number="10">ಏಕೆಂದರೆ, ಶಾಶ್ವತವಾದ ಅಸ್ತಿವಾರವುಳ್ಳ ಅಂದರೆ, ದೇವರೇ ನಿಯೋಜಿಸಿ ನಿರ್ಮಿಸಿದ ನಗರವನ್ನು ಆತನು ಎದುರುನೋಡುತ್ತಿದ್ದನು.</verse>
				<verse number="11">ಇದಲ್ಲದೆ, ಪ್ರಾಯಮೀರಿದ ಸಾರಳು ಕೂಡ ವಿಶ್ವಾಸದ ಮೂಲಕವಾಗಿಯೇ ಗರ್ಭವತಿ ಆಗುವ ಶಕ್ತಿಯನ್ನು ಪಡೆದಳು; ವಾಗ್ದಾನಮಾಡಿದ ದೇವರು ನಂಬಿಕಸ್ಥರು ಎಂಬ ಭರವಸೆ ಆಕೆಗಿತ್ತು.</verse>
				<verse number="12">ಹೀಗೆ ಮೃತಪ್ರಾಯನಾಗಿದ್ದ ಒಬ್ಬ ವ್ಯಕ್ತಿ ಆಕಾಶದ ನಕ್ಷತ್ರಗಳಂತೆಯೂ ಕಡಲ ತೀರದ ಮರಳಿನಂತೆಯೂ ಅಸಂಖ್ಯಾತವಾದ ಸಂತತಿಗೆ ತಂದೆಯಾದನು.</verse>
				<verse number="13">ಇವರೆಲ್ಲರೂ ವಿಶ್ವಾಸವುಳ್ಳವರಾಗಿಯೇ ಮೃತರಾದರು. ದೇವರು ವಾಗ್ದಾನಮಾಡಿದವುಗಳನ್ನು ಪಡೆಯದಿದ್ದರೂ ಅವುಗಳನ್ನು ದೂರದಿಂದಲೇ ನೋಡಿ ಸ್ವಾಗತಿಸಿ ಸಂತೋಷಪಟ್ಟರು; ತಾವು ಜಗತ್ತಿನಲ್ಲಿ ಕೇವಲ ಪರದೇಶಿಗಳೂ ಪ್ರವಾಸಿಗರೂ ಎಂಬುದನ್ನು ಒಪ್ಪಿಕೊಂಡರು.</verse>
				<verse number="14">ಹೀಗೆ ಒಪ್ಪಿಕೊಳ್ಳುವವರೇ ಸ್ವದೇಶವನ್ನು ಅರಸುವವರು ಎಂಬುದನ್ನು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಾರೆ.</verse>
				<verse number="15">ತಾವು ಬಿಟ್ಟುಬಂದ ನಾಡಿನ ಮೇಲೆ ಅವರು ಮನಸ್ಸಿಡಲಿಲ್ಲ. ಹಾಗಿದ್ದಿದ್ದರೆ, ಮರಳಿ ಅಲ್ಲಿಗೆ ಹೋಗುವುದಕ್ಕೆ ಅವರಿಗೆ ಅವಕಾಶ ಯಾವಾಗಲೂ ಇರುತ್ತಿತ್ತು.</verse>
				<verse number="16">ಆದರೆ, ಅವರು ಬಯಸಿದ್ದು ಶ್ರೇಷ್ಠವಾದ ನಾಡನ್ನು, ಅಂದರೆ ಸ್ವರ್ಗವನ್ನು. ಆದ್ದರಿಂದಲೇ ದೇವರು, “ಅವರ ದೇವರು,” ಎಂದು ಕರೆಸಿಕೊಳ್ಳಲು ಅವಮಾನಪಡಲಿಲ್ಲ. ಅದಕ್ಕೆ ಬದಲು, ಅವರಿಗಾಗಿ ಒಂದು ನಗರವನ್ನು ಸಜ್ಜುಗೊಳಿಸಿದ್ದಾರೆ.</verse>
				<verse number="17">ವಿಶ್ವಾಸವಿದ್ದುದರಿಂದಲೇ ಅಬ್ರಹಾಮನು ತಾನು ಪರಿಶೋಧಿತನಾದಾಗ ಇಸಾಕನನ್ನು ಬಲಿಯಾಗಿ ಅರ್ಪಿಸಲು ಮುಂದೆ ಬಂದನು.</verse>
				<verse number="18">“ಇಸಾಕನಿಂದ ಹುಟ್ಟುವವರು ನಿನ್ನ ಸಂತತಿ ಎನಿಸಿಕೊಳ್ಳುವರು,” ಎಂಬ ವಾಗ್ದಾನವನ್ನು ಪಡೆದಿದ್ದರೂ ಅಬ್ರಹಾಮನು ತನ್ನ ಆ ಏಕಮಾತ್ರ ಪುತ್ರನನ್ನು ಬಲಿಕೊಡಲು ಹಿಂಜರಿಯಲಿಲ್ಲ.</verse>
				<verse number="19">ಏಕೆಂದರೆ, ಸತ್ತವರನ್ನು ದೇವರು ಜೀವಕ್ಕೆ ಎಬ್ಬಿಸಬಲ್ಲರು ಎಂಬುದನ್ನು ಅಬ್ರಹಾಮನು ತಿಳಿದಿದ್ದನು. ಅಂತೆಯೇ, ತನ್ನ ಮಗನನ್ನು ಸಾವಿನಿಂದ ಮರಳಿ ಪಡೆದನು. ಮುಂಬರಲಿರುವ ಘಟನೆಗೆ ಇಂದೊಂದು ಮುನ್ಸೂಚನೆಯಾಗಿತ್ತು.</verse>
				<verse number="20">ವಿಶ್ವಾಸವಿದ್ದುದರಿಂದಲೇ ಇಸಾಕನು ಸಹ ಮುಂದೆ ಸಂಭವಿಸಬೇಕಾದ್ದನ್ನು ಸೂಚಿಸಿ, ಯಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು.</verse>
				<verse number="21">ವಿಶ್ವಾಸದಿಂದಲೇ ಯಕೋಬನು, ತಾನು ಸಾಯುವ ಸಮಯದಲ್ಲಿ ಜೋಸೆಫನ ಪ್ರತಿಯೊಬ್ಬ ಮಗನನ್ನೂ ಆಶೀರ್ವದಿಸಿದನು; ಊರುಗೋಲಿನ ಮೇಲೆ ಬಾಗಿಕೊಂಡೇ ದೇವರನ್ನು ಆರಾಧಿಸಿದನು.</verse>
				<verse number="22">ವಿಶ್ವಾಸದಿಂದಲೇ ಜೋಸೆಫನು, ತಾನು ಸಾಯುವ ಗಳಿಗೆಯು ಸಮೀಪಿಸಿದಾಗ, ಇಸ್ರಯೇಲಿನ ಜನರು ಈಜಿಪ್ಟಿನಿಂದ ಹೊರಬರುವುದನ್ನು ಸೂಚಿಸಿದನು. ಅಲ್ಲದೆ, ತನ್ನ ಶವಸಂಸ್ಕಾರದ ಬಗ್ಗೆ ಆದೇಶ ನೀಡಿದನು.</verse>
				<verse number="23">ವಿಶ್ವಾಸವಿದ್ದುದರಿಂದಲೇ ಮೋಶೆ ಹುಟ್ಟಿದಾಗ ಆ ಮಗುವಿನ ಸೌಂದರ್ಯವನ್ನು ಕಂಡು, ತಂದೆತಾಯಿಗಳು ರಾಜಾಜ್ಞೆಗೆ ಅಂಜದೆ, ಮೂರು ತಿಂಗಳವರೆಗೆ ಅದನ್ನು ಬಚ್ಚಿಟ್ಟರು.</verse>
				<verse number="24">ಮೋಶೆ ದೊಡ್ಡವನಾದ ಮೇಲೆ ತಾನು ಅರಸನಾದ ಫರೋಹನ ಕುಮಾರಿಯ ಪುತ್ರ ಎಂದು ಕರೆಸಿಕೊಳ್ಳಲು ನಿರಾಕರಿಸಿದುದೂ ಸಹ ವಿಶ್ವಾಸದಿಂದಲೇ.</verse>
				<verse number="25">ಕ್ಷಣಿಕ ಪಾಪಭೋಗಗಳನ್ನು ಸವಿಯುವುದಕ್ಕಿಂತಲೂ ದೇವಜನರೊಂದಿಗೆ ಕಷ್ಟಕ್ಕೆ ಈಡಾಗುವುದೇ ಲೇಸೆಂದು ಆತನು ತೀರ್ಮಾನಿಸಿಕೊಂಡನು.</verse>
				<verse number="26">ಈಜಿಪ್ಟಿನ ಸಕಲ ಐಶ್ವರ್ಯಕ್ಕಿಂತಲೂ ‘ಕ್ರಿಸ್ತ'ನಿಗೋಸ್ಕರ ನಿಂದೆಯನ್ನು ಅನುಭವಿಸುವುದು ದೊಡ್ಡ ಭಾಗ್ಯವೆಂದು ಆತನು ಎಣಿಸಿದನು. ಏಕೆಂದರೆ, ದೇವರಿಂದ ದೊರಕಲಿದ್ದ ಪ್ರತಿಫಲದ ಮೇಲೆಯೇ ಆತನ ಮನಸ್ಸು ನಾಟಿತ್ತು.</verse>
				<verse number="27">ವಿಶ್ವಾಸವಿದ್ದುದರಿಂದಲೇ ಆತನು ಅರಸನ ಕಡುಕೋಪಕ್ಕೂ ಅಂಜದೆ ಈಜಿಪ್ಟ್ ದೇಶವನ್ನು ಬಿಟ್ಟುಬಂದನು. ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿ ಅವನು ಮುನ್ನಡೆದನು.</verse>
				<verse number="28">ಚೊಚ್ಚಲ ಮಕ್ಕಳನ್ನು ಸಂಹರಿಸುವಾತನು ಇಸ್ರಯೇಲರನ್ನು ಮುಟ್ಟದಂತೆ ರಕ್ತವನ್ನು ಚಿಮುಕಿಸಿ ಪಾಸ್ಕವನ್ನು ಆಚರಿಸುವಂತೆ ಮೋಶೆ ವಿಧಿಸಿದ್ದು ವಿಶ್ವಾಸದಿಂದಲೇ.</verse>
				<verse number="29">ವಿಶ್ವಾಸದಿಂದಲೇ ಇಸ್ರಯೇಲರು ಒಣನೆಲವನ್ನು ದಾಟುವಂತೆ, ಕೆಂಪು ಸಮುದ್ರವನ್ನು ದಾಟಿದರು. ಈಜಿಪ್ಟಿನವರು ಹಾಗೆಯೇ ದಾಟಲೆತ್ನಿಸಿದಾಗ ನೀರಿನ ಪಾಲಾದರು.</verse>
				<verse number="30">ಇಸ್ರಯೇಲರು ಏಳು ದಿನಗಳವರೆಗೆ ಜೆರಿಕೊ ಪಟ್ಟಣದ ಕೋಟೆಯನ್ನು ಪ್ರದಕ್ಷಿಣೆಮಾಡಿ ಬಂದ ನಂತರ ಅವು ತಮ್ಮಷ್ಟಕ್ಕೆ ತಾವೇ ಕುಸಿದು ಬಿದ್ದುದಕ್ಕೆ ಕಾರಣ ಆ ವಿಶ್ವಾಸವೇ.</verse>
				<verse number="31">ವಿಶ್ವಾಸವಿದ್ದುದರಿಂದಲೇ ರಹಾಬಳೆಂಬ ಜಾರಿಣಿ ಇಸ್ರಯೇಲ್ ಗೂಢಚಾರರಿಗೆ ಸೌಹಾರ್ದತೆಯಿಂದ ಆಶ್ರಯ ನೀಡಿ, ಅವಿಶ್ವಾಸಿಗಳೊಡನೆ ನಾಶವಾಗದೆ ಉಳಿದಳು.</verse>
				<verse number="32">ಇನ್ನೂ ಹೇಳಬೇಕೆ? ಗಿಡಿಯೋನ್, ಬಾರಾಕ್, ಸಂಸೋನ್, ಯೆಪ್ತಾಹ, ದಾವೀದ, ಸಮುವೇಲ ಇವರನ್ನೂ ಇತರ ಪ್ರವಾದಿಗಳನ್ನೂ ಕುರಿತು ಹೇಳಬೇಕಾದರೆ ನನಗೆ ಸಮಯ ಸಾಲದು.</verse>
				<verse number="33">ಇವರು ವಿಶ್ವಾಸದಿಂದಲೇ ರಾಜ್ಯಗಳನ್ನು ಗೆದ್ದರು; ನ್ಯಾಯನೀತಿಯಿಂದ ಆಳಿದರು; ದೇವರಿಂದ ವಾಗ್ದಾನಗಳನ್ನು ಪಡೆದರು; ಸಿಂಹಗಳ ಬಾಯನ್ನು ಬಂಧಿಸಿದರು.</verse>
				<verse number="34">ಅಗ್ನಿಜ್ವಾಲೆಯನ್ನು ಆರಿಸಿದರು; ಖಡ್ಗದ ಬಾಯಿಂದ ತಪ್ಪಿಸಿಕೊಂಡರು; ಬಲಹೀನರಾಗಿದ್ದರೂ ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಶತ್ರುಗಳ ಸೈನ್ಯವನ್ನು ಸದೆಬಡಿದರು.</verse>
				<verse number="35">ವಿಶ್ವಾಸದಿಂದಲೇ ಮಹಿಳೆಯರು ಮೃತರಾಗಿದ್ದ ತಮ್ಮವರನ್ನು ಮರಳಿ ಜೀವಂತರಾಗಿ ಪಡೆದರು. ಕೆಲವರು ಇದಕ್ಕಿಂತ ಶ್ರೇಷ್ಠವಾದ ಪುನರುತ್ಥಾನವನ್ನು ಪಡೆಯುವ ಉದ್ದೇಶದಿಂದ ಬಿಡುಗಡೆಯನ್ನು ನಿರಾಕರಿಸಿ, ಹಿಂಸೆಬಾಧೆಗಳಿಗೆ ತುತ್ತಾಗಿ ಮರಣವನ್ನಪ್ಪಿದರು.</verse>
				<verse number="36">ಇನ್ನೂ ಕೆಲವರು ಹಾಸ್ಯ ಪರಿಹಾಸ್ಯ, ಏಟುಪೆಟ್ಟು, ಸೆರೆಸಂಕಲೆಗಳನ್ನು ಅನುಭವಿಸಿದರು.</verse>
				<verse number="37">ಮತ್ತೆ ಕೆಲವರನ್ನು ಜನರು ಕಲ್ಲೆಸೆದು ಕೊಂದರು; ಗರಗಸದಿಂದ ಸೀಳಿ ಸಾಯಿಸಿದರು; ಖಡ್ಗದಿಂದ ಕಡಿದುಹಾಕಿದರು. ಇನ್ನೂ ಕೆಲವರು ನಿರ್ಗತಿಕರಾಗಿ ಕುರಿಮೇಕೆಗಳ ಚರ್ಮಗಳನ್ನು ಹೊದ್ದುಕೊಂಡು ಅಲೆದಾಡಿದರು. ಬಡತನಕ್ಕೂ ಹಿಂಸೆಬಾಧೆಗಳಿಗೂ ಕಷ್ಟಸಂಕಟಗಳಿಗೂ ಈಡಾದರು;</verse>
				<verse number="38">ಇಂಥವರಿಗೆ ಈ ಲೋಕ ತಕ್ಕ ಸ್ಥಳವಾಗಿರಲಿಲ್ಲ. ಈ ಕಾರಣದಿಂದ, ಅವರು ಕಾಡು ಬೆಟ್ಟಗಳಲ್ಲೂ ಗುಹೆಕಣಿವೆಗಳಲ್ಲೂ ತಲೆಮರೆಸಿಕೊಂಡಿದ್ದರು.</verse>
				<verse number="39">ಇವರೆಲ್ಲರೂ ವಿಶ್ವಾಸವುಳ್ಳವರಾದುದರಿಂದಲೇ ಸಜ್ಜನರೆಂದು ಹೆಸರುವಾಸಿಯಾದರು. ಆದರೂ ದೇವರು ವಾಗ್ದಾನಮಾಡಿದ ಸತ್ಫಲಗಳನ್ನು ಸವಿಯಲಿಲ್ಲ.</verse>
				<verse number="40">ಏಕೆಂದರೆ, ದೇವರು ನಮ್ಮೆಲ್ಲರಿಗೋಸ್ಕರ, ಶ್ರೇಷ್ಠವಾದ ಯೋಜನೆಯೊಂದನ್ನು ರೂಪಿಸಿ, ನಮ್ಮೊಡನೆಯೇ ಅಂದಿನ ವಿಶ್ವಾಸಿಗಳೂ ಸಿದ್ಧಿಗೆ ಬರಬೇಕೆಂದು ಸಂಕಲ್ಪಿಸಿದರು.</verse>
			</chapter>
			<chapter number="12">
				<verse number="1">ಆದಕಾರಣ ಇಷ್ಟುಮಂದಿ ಸಾಕ್ಷಿಗಳು ದೊಡ್ಡ ಮೇಘದಂತೆ ನಮ್ಮ ಸುತ್ತಲೂ ಆವರಿಸಿರುವಾಗ, ನಮಗೆ ಅಡ್ಡಿಯಾಗಬಲ್ಲ ಹೊರೆಯನ್ನೂ ಅಂಟಿಕೊಳ್ಳುವ ಪಾಪವನ್ನೂ ತೆಗೆದುಹಾಕಿ, ನಮಗಾಗಿ ನೇಮಿಸಿರುವ ಓಟದ ಸ್ಪರ್ಧೆಯಲ್ಲಿ ನಾವು‍ ಸ್ಥಿರಚಿತ್ತದಿಂದ ಭಾಗವಹಿಸೋಣ.</verse>
				<verse number="2">ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.</verse>
				<verse number="3">ಪಾಪಿಗಳಿಂದ ತಮಗುಂಟಾದ ಕಠಿಣ ವಿರೋಧವನ್ನು ಯೇಸುಸ್ವಾಮಿ ಹೇಗೆ ಸಹಿಸಿಕೊಂಡರೆಂಬುದನ್ನು ಮನಸ್ಸಿನಲ್ಲಿಡಿ. ಆಗ ನೀವು ಬೇಸತ್ತು ಎದೆಗುಂದಲಾರಿರಿ.</verse>
				<verse number="4">ಪಾಪದ ವಿರುದ್ಧ ನೀವು ಕೈಗೊಂಡ ಹೋರಾಟದಲ್ಲಿ ನಿಮ್ಮ ರಕ್ತವನ್ನೇ ಸುರಿಸುವ ಸ್ಥಿತಿಗೆ ನೀವಿನ್ನೂ ಬಂದಿಲ್ಲ.</verse>
				<verse number="5">ಮಕ್ಕಳಿಗೆ ಹೇಳುವಂತೆ ದೇವರು ನಿಮಗೆ ಹೇಳಿರುವ ಎಚ್ಚರಿಕೆಯ ಮಾತನ್ನು ನೀವು ಮರೆತುಬಿಟ್ಟಿರೋ? “ಸುಕುಮಾರಾ, ಸರ್ವೇಶ್ವರ ಕೊಡುವ ಶಿಕ್ಷೆಯನ್ನು ತಾತ್ಸಾರ ಮಾಡದಿರು ಅವರು ನಿನ್ನನ್ನು ದಂಡಿಸುವಾಗ ಧೈರ್ಯಗೆಡದಿರು</verse>
				<verse number="6">ಸರ್ವೇಶ್ವರ ತಾವು ಪ್ರೀತಿಸುವವನನ್ನು ಶಿಕ್ಷಿಸುವರು; ತಮಗೆ ಮಗನೆಂದು ಬರಮಾಡಿಕೊಳ್ಳುವವನನ್ನು ದಂಡಿಸುವರು.”</verse>
				<verse number="7">ಶಿಸ್ತಿಗಾಗಿ ಶಿಕ್ಷೆಯನ್ನು ಸಹಿಸಿಕೊಳ್ಳಬೇಕು. ದೇವರು ನಿಮ್ಮನ್ನು ಮಕ್ಕಳಂತೆ ನೋಡಿಕೊಳ್ಳುತ್ತಾರೆ. ತಂದೆಯಿಂದ ಶಿಕ್ಷೆಯನ್ನು ಪಡೆಯದ ಮಗನಿದ್ದಾನೆಯೇ?</verse>
				<verse number="8">ದೇವರು ಎಲ್ಲಾ ಮಕ್ಕಳನ್ನು ಶಿಕ್ಷಿಸುವಾಗ, ನೀವು ಮಾತ್ರ ಅದಕ್ಕೆ ಹೊರತಾದರೆ ನೀವು ತಂದೆಗೆ ಹುಟ್ಟಿದವರಲ್ಲ, ಹಾದರಕ್ಕೆ ಹುಟ್ಟಿದವರು.</verse>
				<verse number="9">ಲೌಕಿಕ ತಂದೆ ನಮ್ಮನ್ನು ಶಿಕ್ಷಿಸಿದಾಗಲೂ ನಾವು ಅವರನ್ನು ಗೌರವಿಸುತ್ತೇವೆ. ಹೀಗಿರುವಲ್ಲಿ, ಪಾರಮಾರ್ಥಿಕ ತಂದೆಯಾದ ದೇವರಿಗೆ ನಾವು ಎಷ್ಟೋ ವಿಧೇಯರಾಗಿ ಬಾಳಬೇಕಲ್ಲವೇ?</verse>
				<verse number="10">ಲೌಕಿಕ ತಂದೆಯಾದವರು ತಮ್ಮ ಮನಸ್ಸಿಗೆ ಸರಿದೋರಿದಂತೆ ನಮ್ಮನ್ನು ಶಿಕ್ಷಿಸುತ್ತಾರೆ. ಅದು ಕೊಂಚಕಾಲಕ್ಕೆ ಮಾತ್ರ ಪರಿಣಾಮಕರವಾಗಿರುತ್ತದೆ. ದೇವರಾದರೋ ನಾವು ಅವರ ಪರಿಶುದ್ಧತೆಯಲ್ಲೇ ಭಾಗಿಗಳಾಗುವಂತೆ ನಮ್ಮ ಹಿತಕ್ಕೋಸ್ಕರ ಶಿಕ್ಷಿಸುತ್ತಾರೆ.</verse>
				<verse number="11">ಯಾವ ಶಿಕ್ಷೆಯಾದರೂ ತಕ್ಷಣಕ್ಕೆ ಸಿಹಿಯಾಗಿರದೆ ಕಹಿಯಾಗಿಯೇ ಇರುತ್ತದೆ. ಹೀಗೆ ಶಿಸ್ತಿನ ಕ್ರಮಕ್ಕೆ ಒಳಗಾದವರು ಮುಂದಕ್ಕೆ ನ್ಯಾಯನೀತಿಯನ್ನೂ ಶಾಂತಿಸಮಾಧಾನವನ್ನೂ ಪ್ರತಿಫಲವಾಗಿ ಪಡೆಯುತ್ತಾರೆ.</verse>
				<verse number="12">ಆದ್ದರಿಂದ, ಜೋತುಬೀಳುವ ನಿಮ್ಮ ಕೈಗಳನ್ನು ಮೇಲೆತ್ತಿ, ಕುಸಿದುಬೀಳುವ ನಿಮ್ಮ ಮೊಣಕಾಲುಗಳನ್ನು ಚೇತರಿಸಿಕೊಳ್ಳಿ.</verse>
				<verse number="13">ನೀವು ಹಿಡಿದಿರುವ ಹಾದಿಯನ್ನು ಸರಿಪಡಿಸಿಕೊಳ್ಳಿ. ಆಗ ಕುಂಟುವ ಕಾಲು ಉಳುಕದೆ ವಾಸಿಯಾಗುತ್ತದೆ.</verse>
				<verse number="14">ಎಲ್ಲರೊಂದಿಗೂ ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ; ಪರಿಶುದ್ಧತೆಯನ್ನು ಅರಸಿರಿ; ಪರಿಶುದ್ಧತೆಯಿಲ್ಲದೆ ಯಾರೂ ದೇವರನ್ನು ಕಾಣುವಂತಿಲ್ಲ.</verse>
				<verse number="15">ನಿಮ್ಮಲ್ಲಿ ಯಾರೂ ದೇವರ ಅನುಗ್ರಹವನ್ನು ಕಳೆದುಕೊಳ್ಳದಂತೆ ಎಚ್ಚರಿಕೆಯಾಗಿರಿ. ಯಾವ ವಿಷದ ಬೇರೂ ನಿಮ್ಮಲ್ಲಿ ತಲೆದೋರಿ, ಅಸಮಾಧಾನವನ್ನು ಹುಟ್ಟಿಸಿ, ಸಭೆಯನ್ನು ಕೆಡಿಸದಂತೆ ನೋಡಿಕೊಳ್ಳಿ.</verse>
				<verse number="16">ನಿಮ್ಮಲ್ಲಿ ಯಾರೂ ಕಾಮುಕರಾಗಬಾರದು. ಏಸಾವನಂತೆ ಅಧರ್ಮಿಗಳು ಆಗಬಾರದು. ಆತನು, ಒಪ್ಪೊತ್ತಿನ ಊಟಕ್ಕಾಗಿ ತನ್ನ ಜನ್ಮಸಿದ್ಧವಾದ ಹಕ್ಕನ್ನೇ ಮಾರಿಕೊಂಡನು.</verse>
				<verse number="17">ಅನಂತರ ತಂದೆಯ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯಲು ಕಣ್ಣೀರಿಟ್ಟು ಕೇಳಿಕೊಂಡರೂ ಪ್ರಯೋಜನವಾಗಲಿಲ್ಲ; ತಂದೆಯ ತೀರ್ಮಾನವನ್ನು ಮಾರ್ಪಡಿಸುವ ಸಾಧ್ಯತೆಯೂ ಇರಲಿಲ್ಲ. ಇದು ನಿಮಗೆ ತಿಳಿದ ವಿಷಯ.</verse>
				<verse number="18">ನೀವು ಇಸ್ರಯೇಲರಂತೆ ಮುಟ್ಟಬಹುದಾದ ಸೀನಾಯ್ ಬೆಟ್ಟಕ್ಕೆ ಬಂದಿಲ್ಲ. ಅಲ್ಲಿ ಬೆಂಕಿ ಧಗಧಗಿಸುತ್ತಿತ್ತು. ಕಾರ್ಗತ್ತಲು ಕವಿದಿತ್ತು; ಮೋಡದ ಮಬ್ಬು ಮುಸುಕಿತ್ತು; ಬಿರುಗಾಳಿ ಬೀಸುತ್ತಿತ್ತು;</verse>
				<verse number="19">ಕಹಳೆಗಳು ಮೊಳಗುತ್ತಿದ್ದವು. ಆಗ ಧ್ವನಿಯೊಂದು ಕೇಳಿಬಂತು. ಅದನ್ನು ಕೇಳಿದವರು, ಇನ್ನೆಂದಿಗೂ ಆ ಧ್ವನಿ ತಮ್ಮೊಂದಿಗೆ ಮಾತನಾಡುವುದೇ ಬೇಡವೆಂದು ಕೇಳಿಕೊಂಡರು.</verse>
				<verse number="20">ಏಕೆಂದರೆ, ಈ ಬೆಟ್ಟವನ್ನು ಮುಟ್ಟುವ ಯಾರೇ ಆಗಲಿ, ಯಾವ ಪ್ರಾಣಿಯೇ ಆಗಲಿ, ಅದನ್ನು ಕಲ್ಲೆಸೆದು ಕೊಲ್ಲಬೇಕು, ಎಂಬ ಆಜ್ಞೆಯನ್ನು ಅವರು ಸಹಿಸಲಾರದೆಹೋದರು.</verse>
				<verse number="21">ಆ ನೋಟ ಎಷ್ಟು ಭಯಂಕರವಾಗಿತ್ತೆಂದರೆ, ಮೋಶೆ ಕೂಡ, “ನಾನು ಭಯದಿಂದ ನಡುಗುತ್ತಿದ್ದೇನೆ,” ಎಂದು ಹೇಳುವಂತಾಯಿತು!</verse>
				<verse number="22">ಆದರೆ ನೀವು ಬಂದಿರುವುದು ಸಿಯೋನ್ ಬೆಟ್ಟಕ್ಕೆ, ಜೀವಂತ ದೇವರ ನಗರಕ್ಕೆ; ಸ್ವರ್ಗೀಯ ಜೆರುಸಲೇಮಿಗೆ, ಅಸಂಖ್ಯ ದೇವದೂತರು ಕೂಡಿರುವ ಉತ್ಸವ ಕೂಟಕ್ಕೆ;</verse>
				<verse number="23">ಸ್ವರ್ಗದಲ್ಲಿ ದಾಖಲೆಯಾಗಿರುವ ಜೇಷ್ಠಪುತ್ರನ ಸಭೆಗೆ; ನೀವು ಬಂದಿರುವುದು ಸಕಲ ಮಾನವರ ನ್ಯಾಯಮೂರ್ತಿಯಾದ ದೇವರ ಸನ್ನಿಧಿಗೆ; ಸಿದ್ಧಿಗೆ ಬಂದ ಸತ್ಪುರುಷರ ಆತ್ಮಗಳ ಸಮೂಹಕ್ಕೆ;</verse>
				<verse number="24">ಹೊಸ ಒಡಂಬಡಿಕೆಯ ಮಧ್ಯಸ್ಥರಾದ ಯೇಸುಸ್ವಾಮಿಯ ಬಳಿಗೆ, ಹೇಬೆಲನ ರಕ್ತಕ್ಕಿಂತಲೂ ಅಮೋಘವಾಗಿ ಮೊರೆಯಿಡುವ ಪ್ರೋಕ್ಷಣಾರಕ್ತದ ಬಳಿಗೆ ನೀವು ಬಂದಿದ್ದೀರಿ.</verse>
				<verse number="25">ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?</verse>
				<verse number="26">ಅಂದು ದೇವರ ಧ್ವನಿಗೆ ಭೂಮಿಯು ನಡುಗಿತು. ಇಂದಾದರೋ, “ಇನ್ನೂ ಒಂದು ಸಾರಿ ನಾನು ಭೂಮಿಯನ್ನಷ್ಟೇ ಅಲ್ಲ, ಆಕಾಶವನ್ನೂ ನಡುಗಿಸುತ್ತೇನೆ,” ಎಂದು ಪ್ರತಿಜ್ಞೆಮಾಡಿರುತ್ತಾರೆ.</verse>
				<verse number="27">“ಇನ್ನೂ ಒಂದು ಸಾರಿ,” ಎಂಬ ಈ ಮಾತು ಸೃಷ್ಟಿಸಲಾದ ವಸ್ತುಗಳನ್ನು ಕದಲಿಸಿ ಕಿತ್ತುಹಾಕಲಾಗುವುದು ಎಂಬುದನ್ನು ಸೂಚಿಸುತ್ತದೆ. ಆಗ, ಕದಲಿಸಲಾಗದ ವಸ್ತುಗಳೆಲ್ಲಾ ಸ್ಥಿರವಾಗಿ ಉಳಿಯುತ್ತವೆ.</verse>
				<verse number="28">ಆದ್ದರಿಂದ ಯಾರಿಂದಲೂ ಕದಲಿಸಲಾಗದ ಸಾಮ್ರಾಜ್ಯವನ್ನು ಪಡೆದಿರುವ ನಾವು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸೋಣ. ಅವರಿಗೆ ಚಿರಋಣಿಗಳಾಗಿದ್ದು, ಭಯಭಕ್ತಿಯಿಂದ ಸಮರ್ಪಕ ಆರಾಧನೆಯನ್ನು ಸಲ್ಲಿಸೋಣ.</verse>
				<verse number="29">ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.</verse>
			</chapter>
			<chapter number="13">
				<verse number="1">ಸೋದರ ಪ್ರೀತಿಯಲ್ಲಿ ನೆಲೆಯಾಗಿ ನಿಲ್ಲಿರಿ.</verse>
				<verse number="2">ಅತಿಥಿಸತ್ಕಾರ ಮಾಡುವುದನ್ನು ಮರೆಯದಿರಿ. ಅದನ್ನು ಮಾಡುವಾಗ ಅರಿಯದೆ ಕೆಲವರು ದೇವದೂತರನ್ನೇ ಉಪಚರಿಸಿದ್ದಾರೆ.</verse>
				<verse number="3">ಸೆರೆಯಲ್ಲಿರುವವರನ್ನು ಸ್ಮರಿಸಿಕೊಳ್ಳಿ. ಅವರ ಸಂಗಡ ನೀವೂ ಸೆರೆಯಲ್ಲಿರುವಂತೆ ಭಾವಿಸಿಕೊಳ್ಳಿ. ಅನ್ಯಾಯಕ್ಕೆ ಒಳಗಾಗಿರುವವರನ್ನು ಜ್ಞಾಪಕದಲ್ಲಿಟ್ಟುಕೊಳ್ಳಿ. ಅನ್ಯಾಯಕ್ಕೆ ಒಳಗಾಗಬಲ್ಲ ದೇಹವೊಂದು ನಿಮಗೂ ಸಹ ಇದೆಯಲ್ಲವೇ?</verse>
				<verse number="4">ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.</verse>
				<verse number="5">ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.</verse>
				<verse number="6">ಆದ್ದರಿಂದ, “ಸರ್ವೇಶ್ವರ ನನಗೆ ಸಹಾಯಕ, ನಾನು ಭಯಪಡೆನು; ಮಾನವನು ನನಗೇನು ಮಾಡಬಲ್ಲನು?” ಎಂದು ನಾವು ಧೈರ್ಯದಿಂದ ಹೇಳಲು ಸಾಧ್ಯ.</verse>
				<verse number="7">ದೇವರ ವಾಕ್ಯವನ್ನು ನಿಮಗೆ ಹೇಳಿಕೊಟ್ಟ ಹಿಂದಿನ ಸಭಾನಾಯಕರನ್ನು ಮರೆಯಬೇಡಿ. ಅವರು ಹೇಗೆ ಬಾಳಿದರು, ಎಂಥ ಮರಣವನ್ನು ಪಡೆದರು ಎಂಬುದನ್ನು ಕುರಿತು ಆಲೋಚಿಸಿರಿ. ಅವರ ವಿಶ್ವಾಸ ನಿಮಗೆ ಆದರ್ಶವಾಗಿರಲಿ.</verse>
				<verse number="8">ಯೇಸುಕ್ರಿಸ್ತರು, ನಿನ್ನೆ ಇದ್ದಹಾಗೆಯೇ ಇಂದೂ ಎಂದೆಂದೂ ಇದ್ದಾರೆ.</verse>
				<verse number="9">ನಾನಾವಿಧವಾದ ವಿಚಿತ್ರ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ನಿಮ್ಮ ಹೃದಯವನ್ನು, ಊಟೋಪಚಾರಗಳನ್ನು ಕುರಿತ ವಿಧಿನಿಯಮಗಳಿಂದ ಅಲ್ಲ, ದೇವರ ವರಪ್ರಸಾದದಿಂದ ದೃಢಪಡಿಸಿಕೊಳ್ಳಿ. ಅಂಥ ವಿಧಿನಿಯಮಗಳಿಗೆ ಬದ್ಧರಾಗಿದ್ದವರು ಯಾವ ಪ್ರಯೋಜನವನ್ನೂ ಪಡೆಯಲಿಲ್ಲ.</verse>
				<verse number="10">ನಮಗೊಂದು ಬಲಿಪೀಠವಿದೆ; ಅಲ್ಲಿ ಅರ್ಪಿಸಲಾಗುವ ಬಲಿಯನ್ನು ಭುಜಿಸಲು ಯೆಹೂದ್ಯ ಗುಡಾರಗಳಲ್ಲಿ ಸೇವೆಸಲ್ಲಿಸುವ ಯಾಜಕರಿಗೆ ಹಕ್ಕಿಲ್ಲ.</verse>
				<verse number="11">ಪ್ರಧಾನಯಾಜಕನು ಪಾಪಪರಿಹಾರಕ ಬಲಿಗಾಗಿ ಯಾವ ಪ್ರಾಣಿಗಳ ರಕ್ತವನ್ನು ಗರ್ಭಗುಡಿಗೆ ತರುತ್ತಾನೋ ಆ ಪ್ರಾಣಿಗಳ ದೇಹವನ್ನು ಪಾಳೆಯದಾಚೆ ಸುಡುವುದುಂಟು.</verse>
				<verse number="12">ಯೇಸುಸ್ವಾಮಿ ಕೂಡ ತಮ್ಮ ರಕ್ತದಿಂದ ಜನರನ್ನು ಪರಿಶುದ್ಧಗೊಳಿಸುವುದಕ್ಕೋಸ್ಕರ, ನಗರದ್ವಾರದ ಹೊರಗಡೆ ಮರಣಕ್ಕೆ ಈಡಾದರು.</verse>
				<verse number="13">ಅಂತೆಯೇ ನಾವು ಅವರ ನಿಮಿತ್ತ ನಮಗೆ ಬರುವ ನಿಂದೆ ಅವಮಾನಗಳನ್ನು ಹೊತ್ತು ನಮ್ಮ ಪಾಳೆಯದಿಂದಾಚೆ ಅವರ ಬಳಿಗೆ ಹೋಗೋಣ.</verse>
				<verse number="14">ಏಕೆಂದರೆ, ಇಹದಲ್ಲಿ ಶಾಶ್ವತವಾದ ನಗರವು ನಮಗಿಲ್ಲ. ಬರಲಿರುವ ನಗರವನ್ನು ನಾವು ಎದುರುನೋಡುವವರು.</verse>
				<verse number="15">ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.</verse>
				<verse number="16">ಇದಲ್ಲದೆ, ಪರೋಪಕಾರ ಮಾಡುವುದನ್ನೂ ನಿಮಗಿರುವುದನ್ನು ಪರರೊಡನೆ ಹಂಚಿಕೊಳ್ಳುವುದನ್ನೂ ನಿಲ್ಲಿಸಬೇಡಿ. ಇವು ಕೂಡ ದೇವರಿಗೆ ಮೆಚ್ಚುಗೆಯಾದ ಬಲಿಯರ್ಪಣೆಗಳೇ.</verse>
				<verse number="17">ನಿಮ್ಮ ಸಭಾನಾಯಕರಿಗೆ ವಿಧೇಯರಾಗಿರಿ. ಅವರ ಆಜ್ಞೆಗಳನ್ನು ಪಾಲಿಸಿರಿ. ಅವರು ನಿಮ್ಮ ಆತ್ಮಗಳ ಪಾಲಕರು; ದೇವರಿಗೆ ಲೆಕ್ಕ ಒಪ್ಪಿಸಬೇಕಾದವರು. ಈ ಸೇವೆಯನ್ನು ಅವರು ಸಂತೋಷದಿಂದ ಮಾಡುವಂತೆ ನೀವು ನಡೆದುಕೊಳ್ಳಿ. ಅವರು ಮನನೊಂದುಕೊಂಡು ಮಾಡುವ ಸೇವೆಯಿಂದ ನಿಮಗೆ ಒಳಿತಾಗದು.</verse>
				<verse number="18">ನಮಗಾಗಿಯೂ ಪ್ರಾರ್ಥಿಸಿರಿ. ಎಲ್ಲಾ ವಿಷಯಗಳಲ್ಲಿ ನಾವು ಸಜ್ಜನರಾಗಿ ನಡೆದುಕೊಳ್ಳಬೇಕೆಂಬುದೇ ನಮ್ಮ ಅಪೇಕ್ಷೆ. ನಮ್ಮ ಮನಸ್ಸಾಕ್ಷಿ ಶುದ್ಧವಾಗಿದೆಯೆಂಬ ದೃಢನಂಬಿಕೆ ನಮಗಿದೆ.</verse>
				<verse number="19">ನಿಮ್ಮ ಬಳಿಗೆ ನಾನು ಆದಷ್ಟು ಬೇಗನೆ ಬಂದು ಸೇರುವಂತೆ ಪ್ರಾರ್ಥಿಸಬೇಕೆಂದು ನಿಮ್ಮನ್ನು ಬಹಳವಾಗಿ ಕೇಳಿಕೊಳ್ಳುತ್ತೇನೆ.</verse>
				<verse number="20">ಸಭೆಯೆಂಬ ಕುರಿಮಂದೆಗೆ ಮಹಾಪಾಲಕರಾದ ಯೇಸುಸ್ವಾಮಿ ಶಾಶ್ವತ ಒಡಂಬಡಿಕೆಯನ್ನು ನಿಶ್ಚಯಪಡಿಸುವುದಕ್ಕಾಗಿ ತಮ್ಮ ರಕ್ತವನ್ನು ಸುರಿಸಿದರು. ಶಾಂತಿದಾತರಾದ ದೇವರು ನಮ್ಮ ಪ್ರಭುವನ್ನು ಸಾವಿನಿಂದ ಜೀವಕ್ಕೆ ಎಬ್ಬಿಸಿದರು.</verse>
				<verse number="21">ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.</verse>
				<verse number="22">ಸಹೋದರರೇ, ಈ ಬುದ್ಧಿಮಾತುಗಳನ್ನು ತಾಳ್ಮೆಯಿಂದ ಸ್ವೀಕರಿಸಬೇಕೆಂದು ಕೇಳಿಕೊಳ್ಳುತ್ತೇನೆ. ಇವನ್ನು ಸಂಕ್ಷೇಪವಾಗಿಯೇ ನಿಮಗೆ ಬರೆದಿದ್ದೇನೆ.</verse>
				<verse number="23">ನಿಮ್ಮ ಸಹೋದರ ತಿಮೊಥೆಯನಿಗೆ ಬಿಡುಗಡೆಯಾಗಿದೆ ಎಂದು ನಿಮಗೆ ತಿಳಿಸಬಯಸುತ್ತೇನೆ. ಆತನು ಬೇಗ ಬಂದರೆ, ನಾನೂ ಆತನೊಂದಿಗೆ ಬಂದು ನಿಮ್ಮನ್ನು ಕಾಣುತ್ತೇನೆ.</verse>
				<verse number="24">ನಿಮ್ಮ ಸಭಾನಾಯಕರೆಲ್ಲರಿಗೂ ಎಲ್ಲಾ ದೇವಜನರಿಗೂ ನನ್ನ ವಂದನೆಗಳು. ಇಟಲಿಯಿಂದ ಬಂದ ಸಹೋದರರು ನಿಮಗೆ ವಂದನೆ ತಿಳಿಸಿದ್ದಾರೆ.</verse>
				<verse number="25">ದೇವರ ಕೃಪಾಶೀರ್ವಾದ ನಿಮ್ಮೆಲ್ಲರಲ್ಲೂ ಇರಲಿ!</verse>
			</chapter>
		</book>
		<book number="59">
			<chapter number="1">
				<verse number="1">ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು.</verse>
				<verse number="2">ನನ್ನ ಪ್ರಿಯ ಸಹೋದರರೇ, ನಿಮಗೆ ವಿವಿಧ ಸಂಕಟ ಶೋಧನೆಗಳು ಬಂದೊದಗಿದಾಗ ಅವುಗಳನ್ನು ಸಂತೋಷದಿಂದ ಸಹಿಸಿಕೊಳ್ಳಿ.</verse>
				<verse number="3">ಇವು ನಿಮ್ಮ ವಿಶ್ವಾಸವನ್ನು ಒರೆಗೆ ಹಚ್ಚಿ ನಿಮ್ಮನ್ನು ದೃಢಪಡಿಸುತ್ತವೆ; ನಿಮ್ಮನ್ನು ಸಹನಶೀಲರನ್ನಾಗಿ ಮಾಡುತ್ತವೆ.</verse>
				<verse number="4">ಈ ಸಹನೆ ಸಿದ್ಧಿಗೆ ಬಂದಾಗ ನೀವು ಯಾವ ಕುಂದುಕೊರತೆ ಇಲ್ಲದೆ, ಪರಿಪೂರ್ಣರೂ ಸರ್ವಗುಣ ಸಂಪನ್ನರೂ ಆಗುತ್ತೀರಿ.</verse>
				<verse number="5">ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.</verse>
				<verse number="6">ಆದರೆ ಬೇಡುವವನು ವಿಶ್ವಾಸದಿಂದ ಬೇಡಲಿ. ಸಂಶಯಕ್ಕೆ ಎಡೆಕೊಡದಿರಲಿ. ಸಂಶಯಕ್ಕೀಡಾಗುವವನ ಪರಿಸ್ಥಿತಿಯಾದರೋ ಬಿರುಗಾಳಿಯ ಬಡಿತಕ್ಕೆ ಸಿಕ್ಕಿದ ಸಮುದ್ರದ ಅಲೆಯಂತೆ ತುಯ್ದಾಡುತ್ತಿರುತ್ತದೆ.</verse>
				<verse number="7">ಅಂಥವನು ಚಂಚಲಚಿತ್ತನು. ಆಚಾರವಿಚಾರಗಳಲ್ಲಿ ಅಸ್ಥಿರ ಮನಸ್ಸುಳ್ಳವನು. ಆದ್ದರಿಂದ ಅವನು ಪ್ರಭುವಿನಿಂದ ಏನನ್ನಾದರೂ ಪಡೆಯುತ್ತೇನೆಂದು ಭಾವಿಸದಿರಲಿ.</verse>
				<verse number="8"></verse>
				<verse number="9">ದೀನದಲಿತನಾದ ಸಹೋದರನು, ದೇವರು ತನ್ನನ್ನು ಉನ್ನತ ಸ್ಥಿತಿಗೆ ಏರಿಸಿದಾಗ ಆನಂದಿಸಲಿ.</verse>
				<verse number="10">ಅಂತೆಯೇ ಧನಿಕನಾದ ಸಹೋದರನು, ದೇವರು ತನ್ನನ್ನು ದೀನಸ್ಥಿತಿಗೆ ಇಳಿಸಿದಾಗ ಆನಂದಿಸಲಿ.</verse>
				<verse number="11">ಏಕೆಂದರೆ, ಧನಿಕರು ಹುಲ್ಲಿನ ಹೂವಿನಂತೆ ಗತಿಸಿಹೋಗುತ್ತಾರೆ. ಸೂರ್ಯನ ಸುಡುಬಿಸಿಲಿಗೆ ಹುಲ್ಲು ಒಣಗಿಹೋಗುತ್ತದೆ. ಅದರ ಹೂವು ಉದುರಿಹೋಗುವುದು, ಅದರ ಅಂದಚೆಂದವೂ ಹಾಳಾಗಿ ಹೋಗುತ್ತದೆ. ಅಂತೆಯೇ ಧನಿಕನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುತ್ತಾನೆ.</verse>
				<verse number="12">ಸಂಕಟ ಶೋಧನೆಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವವನೇ ಧನ್ಯನು. ಅವನು ಪರಿಶೋಧನೆಯಲ್ಲಿ ಯಶಸ್ವಿಯಾದ ಮೇಲೆ ಸಜ್ಜೀವವೆಂಬ ಜಯಮಾಲೆಯನ್ನು ಪಡೆಯುತ್ತಾನೆ. ದೇವರು ತಮ್ಮನ್ನು ಪ್ರೀತಿಸುವವರಿಗೆ ಇದನ್ನು ಕಾದಿರಿಸಿರುತ್ತಾರೆ.</verse>
				<verse number="13">ಪಾಪಪ್ರಲೋಭನೆಗೆ ಒಳಗಾದಾಗ, “ಈ ಪ್ರಲೋಭನೆಗಳು ದೇವರಿಂದಲೇ ಬಂದವು,” ಎಂದು ಯಾರೂ ಹೇಳದಿರಲಿ. ಏಕೆಂದರೆ, ದೇವರು ಸ್ವತಃ ಪಾಪಪ್ರಲೋಭನೆಗೆ ಗುರಿಯಾಗುವುದಿಲ್ಲ ಮತ್ತು ಯಾರನ್ನೂ ಅಂಥ ಪ್ರಲೋಭನೆಗೆ ಗುರಿಪಡಿಸುವುದಿಲ್ಲ.</verse>
				<verse number="14">ಮಾನವನು ಪ್ರಲೋಭನೆಗೆ ಒಳಗಾಗುವುದು ತನ್ನ ದುರಿಚ್ಛೆಯಿಂದಲೇ ಅದು ಅವನನ್ನು ಆಕರ್ಷಿಸಿ ಮರುಳುಗೊಳಿಸುತ್ತದೆ.</verse>
				<verse number="15">ದುರಿಚ್ಛೆ ಗರ್ಭಧರಿಸಿ ಪಾಪಕ್ಕೆ ಜನ್ಮವೀಯುತ್ತದೆ; ಪಾಪವು ಪೂರ್ತಿಯಾಗಿ ಬೆಳೆದು ಮರಣವನ್ನು ಹಡೆಯುತ್ತದೆ.</verse>
				<verse number="16">ಪ್ರಿಯ ಸಹೋದರರೇ, ಮೋಸಹೋಗಬೇಡಿ.</verse>
				<verse number="17">ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.</verse>
				<verse number="18">ಸೃಷ್ಟಿಗಳಲ್ಲೆಲ್ಲಾ ನಾವು ಪ್ರಥಮ ಫಲವಾಗುವಂತೆ ದೇವರು ತಮ್ಮ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ನಮಗೆ ಜೀವವಿತ್ತರು.</verse>
				<verse number="19">ಸಹೋದರರೇ, ಇದನ್ನು ನೆನಪಿನಲ್ಲಿಡಿ; ನಿಮ್ಮಲ್ಲಿ ಪ್ರತಿಯೊಬ್ಬನು ಆಲಿಸುವುದರಲ್ಲಿ ಚುರುಕಾಗಿ, ಮಾತನಾಡುವುದರಲ್ಲಿ ದುಡುಕದೆ, ಸಿಟ್ಟುಗೊಳ್ಳುವುದರಲ್ಲಿ ಸಾವಧಾನವಾಗಿ ಇರಲಿ.</verse>
				<verse number="20">ಮಾನವನ ಕೋಪ ದೇವನೀತಿಗೆ ಧಕ್ಕೆ! ಆದುದರಿಂದ ನಿಮ್ಮಲ್ಲಿರುವ ಎಲ್ಲ ನೀಚತನವನ್ನು ಮತ್ತು ಬೆಳೆಯುತ್ತಿರುವ ದುಷ್ಟತನವನ್ನು ಕಿತ್ತೊಗೆಯಿರಿ. ನಿಮ್ಮ ಹೃದಯದಲ್ಲಿ ದೇವರು ನೆಟ್ಟಿರುವ ವಾಕ್ಯವನ್ನು ನಮ್ರತೆಯಿಂದ ಪರಿಗ್ರಹಿಸಿರಿ. ಇದು ನಿಮ್ಮ ಜೀವೋದ್ಧಾರಮಾಡಬಲ್ಲದು.</verse>
				<verse number="21"></verse>
				<verse number="22">ದೇವರ ವಾಕ್ಯವನ್ನು ಕಿವಿಯಿಂದ ಕೇಳಿದರೆ ಸಾಕೆಂದು ತಿಳಿದು ಮರುಳಾಗದಿರಿ. ಆ ವಾಕ್ಯವನ್ನು ಅನುಸರಿಸಿ ನಡೆಯುವವರಾಗಿರಿ.</verse>
				<verse number="23">ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯದವನು ಕನ್ನಡಿಯಲ್ಲಿ ತನ್ನ ಸಹಜ ಮುಖವನ್ನು ನೋಡಿ,</verse>
				<verse number="24">ಮರುಕ್ಷಣವೇ ತಾನು ಹೇಗಿದ್ದೇನೆಂದು ಮರೆತುಬಿಡುವವನಿಗೆ ಸಮಾನನು.</verse>
				<verse number="25">ಆದರೆ ನಮಗೆ ವಿಮೋಚನೆಯನ್ನು ತರುವ ಸರ್ವೋತ್ತಮ ಧರ್ಮಶಾಸ್ತ್ರವನ್ನು ಲಕ್ಷ್ಯವಿಟ್ಟು ನೋಡಿ ಅದರಲ್ಲೇ ಧ್ಯಾನಾಸಕ್ತನಾಗಿರುವವನು ಅದನ್ನು ಮರೆಯುವುದಿಲ್ಲ. ಅವನು ಕೇಳುವವನು ಮಾತ್ರ ಆಗಿರದೆ, ವಾಕ್ಯದ ಪ್ರಕಾರ ನಡೆಯುವವನೂ ಆಗಿರುತ್ತಾನೆ. ಇಂಥವನು ಭಾಗ್ಯವಂತನು!</verse>
				<verse number="26">ತಾನು ಸದ್ಭಕ್ತನೆಂದು ಭಾವಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣ ಹಾಕದಿದ್ದರೆ, ಅಂಥವನ ಭಕ್ತಿ ವ್ಯರ್ಥ. ಅವನು ತನ್ನನ್ನೇ ವಂಚಿಸಿಕೊಳ್ಳುತ್ತಾನಷ್ಟೆ.</verse>
				<verse number="27">ಕಷ್ಟಸಂಕಟಗಳಲ್ಲಿರುವ ಅನಾಥರಿಗೂ ವಿಧವೆಯರಿಗೂ ನೆರವಾಗುವುದು ಹಾಗೂ ಪ್ರಾಪಂಚಿಕ ಮಲಿನತೆಯಿಂದ ದೂರವಿರುವುದು - ನಮ್ಮ ತಂದೆಯಾದ ದೇವರ ಮುಂದೆ ನಿಷ್ಕಳಂಕವಾದ ಮತ್ತು ನಿರ್ಮಲವಾದ ಧರ್ಮವೆನಿಸುತ್ತದೆ.</verse>
			</chapter>
			<chapter number="2">
				<verse number="1">ನನ್ನ ಸಹೋದರರೇ, ಮಹಿಮಾನ್ವಿತ ಪ್ರಭು ಯೇಸುಕ್ರಿಸ್ತರಲ್ಲಿ ವಿಶ್ವಾಸವಿಟ್ಟಿರುವ ನೀವು ಪಕ್ಷಪಾತ ಮಾಡಲೇಬಾರದು.</verse>
				<verse number="2">ಉದಾಹರಣೆಗೆ: ಇಬ್ಬರು ನಿಮ್ಮ ಪ್ರಾರ್ಥನಾಲಯಕ್ಕೆ ಬಂದರೆಂದು ಇಟ್ಟುಕೊಳ್ಳಿ. ಅವರಲ್ಲಿ ಒಬ್ಬನು ಚಿನ್ನದುಂಗುರವನ್ನು ತೊಟ್ಟು, ಸೊಗಸಾದ ಉಡುಪನ್ನು ಧರಿಸಿದವನು. ಮತ್ತೊಬ್ಬನು ಹರಕುಬಟ್ಟೆಯನ್ನು ಉಟ್ಟ ಬಡವನು.</verse>
				<verse number="3">ಆಗ, ನೀವು ಸೊಗಸಾದ ಉಡುಪನ್ನು ಧರಿಸಿದವನಿಗೆ ಗೌರವದಿಂದ, “ಬನ್ನಿ ಸ್ವಾಮೀ ಬನ್ನಿ, ದಯವಿಟ್ಟು ಈ ಪೀಠವನ್ನು ಅಲಂಕರಿಸಿ,” ಎನ್ನುತ್ತೀರಿ. ಬಡವನಿಗೆ, “ನೀನು ಅಲ್ಲಿಯೇ ನಿಂತುಕೋ, ಇಲ್ಲವೇ ಕೆಳಗೆ, ನನ್ನ ಕಾಲ ಬಳಿ ಕುಳಿತುಕೋ,” ಎನ್ನಿತ್ತೀರಿ. ಹೀಗಿರಲು,</verse>
				<verse number="4">ನೀವು ನಿಮ್ಮಲ್ಲೇ ಭೇದಭಾವ ಮಾಡುತ್ತೀರಿ; ಅಲ್ಲದೆ ನೀವು ಮಾಡುವ ಈ ತೀರ್ಪು ದುರುದ್ದೇಶದಿಂದ ಕೂಡಿರುತ್ತದೆ.</verse>
				<verse number="5">ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?</verse>
				<verse number="6">ಹೀಗಿದ್ದರೂ ನೀವು ಬಡವನನ್ನು ಅವಮಾನಕ್ಕೆ ಈಡುಮಾಡಿದಿರಿ. ನಿಮ್ಮನ್ನು ತುಳಿದು ಹಿಂಸಿಸುವವರು ಮತ್ತು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆಯುವವರು ಸಿರಿವಂತರೇ ಅಲ್ಲವೇ?</verse>
				<verse number="7">ನೀವು ಯಾರಿಗೆ ಶರಣರಾಗಿದ್ದೀರೋ ಅವರ ಶ್ರೇಷ್ಠ ನಾಮವನ್ನು ದೂಷಿಸುವವರೂ ಸಿರಿವಂತರೇ ಅಲ್ಲವೇ?</verse>
				<verse number="8">‘ನಿನ್ನನ್ನು ನೀನು ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನು ಪ್ರೀತಿಸು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಈ ರಾಜಾಜ್ಞೆಯನ್ನು ಕೈಗೊಂಡು ನಡೆಯುತ್ತಿದ್ದರೆ ಅದು ಒಳ್ಳೆಯದು.</verse>
				<verse number="9">ಅದನ್ನು ಬಿಟ್ಟು ಪಕ್ಷಪಾತ ಮಾಡಿದರೆ ನೀವು ಪಾಪಮಾಡುತ್ತೀರಿ ಮತ್ತು ಧರ್ಮಶಾಸ್ತ್ರ ನಿಮ್ಮನ್ನು ಅಪರಾಧಿಗಳೆಂದು ನಿರ್ಣಯಿಸುತ್ತದೆ.</verse>
				<verse number="10">ಒಬ್ಬನು ಇಡೀ ಧರ್ಮಶಾಸ್ತ್ರವನ್ನೇ ಕೈಗೊಂಡು ಒಂದೇ ಒಂದು ನಿಯಮವನ್ನು ಮೀರಿ ನಡೆದರೂ ಅವನು ಇಡೀ ಧರ್ಮಶಾಸ್ತ್ರವನ್ನೇ ಮೀರಿ ನಡೆದಂತಾಗುತ್ತದೆ.</verse>
				<verse number="11">ಏಕೆಂದರೆ, ‘ವ್ಯಭಿಚಾರ ಮಾಡಬೇಡ’ ಎಂದು ಹೇಳಿದ ದೇವರೇ, ‘ಕೊಲ್ಲಬೇಡ’ ಎಂದೂ ಹೇಳಿದ್ದಾರೆ. ನೀನು ವ್ಯಭಿಚಾರ ಮಾಡದಿದ್ದರೂ ಕೊಲೆ ಮಾಡುವವನಾದರೆ ಧರ್ಮಶಾಸ್ತ್ರವನ್ನೇ ಮೀರಿದಂತಾಗುತ್ತದೆ.</verse>
				<verse number="12">ವಿಮೋಚನೆಯನ್ನೀಯುವ ಧರ್ಮಶಾಸ್ತ್ರದ ನ್ಯಾಯತೀರ್ಪಿಗೆ ಗುರಿಯಾಗುವಿರಿ ಎಂದು ತಿಳಿದು ನೀವು ನಡೆಯಲ್ಲೂ ನುಡಿಯಲ್ಲೂ ಯೋಗ್ಯರಾಗಿ ಬಾಳಿ.</verse>
				<verse number="13">ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.</verse>
				<verse number="14">ಸಹೋದರರೇ, ಒಬ್ಬನು ತನಗೆ ವಿಶ್ವಾಸ ಇದೆಯೆಂದು ಕೊಚ್ಚಿಕೊಂಡು ಅದನ್ನು ಕಾರ್ಯತಃ ವ್ಯಕ್ತಪಡಿಸದಿದ್ದರೆ ಅದರಿಂದ ಪ್ರಯೋಜನ ಏನು? ಅಂಥ ವಿಶ್ವಾಸ ಅವನನ್ನು ಉದ್ಧಾರಮಾಡಬಲ್ಲುದೇ?</verse>
				<verse number="15">ಒಂದು ವೇಳೆ ಒಬ್ಬ ಸಹೋದರನಾಗಲಿ, ಸಹೋದರಿಯಾಗಲಿ ದಿನನಿತ್ಯ ಊಟಬಟ್ಟೆಗಿಲ್ಲದೆ ಇರುವಾಗ, ನಿಮ್ಮಲ್ಲಿ ಯಾರಾದರು ಅವರಿಗೆ ಅಗತ್ಯವಾದುದನ್ನು ನೀಡದೆ, “ಹೋಗು, ಸುಖವಾಗಿ ಬಾಳು, ಚಳಿ ಕಾಯಿಸಿಕೊ, ಹೊಟ್ಟೆ ತುಂಬಾ ತಿನ್ನು,” ಎಂದು ಬರೀ ಬಾಯಿಮಾತಿನಲ್ಲಿ ಉಪಚರಿಸಿದರೆ ಅದರಿಂದಾದ ಪ್ರಯೋಜನವೇನು?</verse>
				<verse number="16"></verse>
				<verse number="17">ಸತ್ಕ್ರಿಯೆಗಳಿಲ್ಲದ ವಿಶ್ವಾಸ ಸತ್ತವಿಶ್ವಾಸವೇ ಸರಿ.</verse>
				<verse number="18">ಒಬ್ಬನು, “ನಿನ್ನಲ್ಲಿ ವಿಶ್ವಾಸವಿದೆ, ನನ್ನಲ್ಲಿ ಸತ್ಕ್ರಿಯೆಗಳಿವೆ,” ಎನ್ನಬಹುದು. ಅಂಥವನಿಗೆ, “ಸತ್ಕ್ರಿಯೆಗಳಿಲ್ಲದ ನಿನ್ನ ವಿಶ್ವಾಸವನ್ನು ನನಗೆ ತೋರಿಸು; ನನ್ನ ಸತ್ಕಾರ್ಯಗಳ ಮೂಲಕ ನನ್ನ ವಿಶ್ವಾಸವನ್ನು ನಿನಗೆ ವ್ಯಕ್ತಪಡಿಸುತ್ತೇನೆ,” ಎಂದು ಉತ್ತರಿಸಬಹುದು.</verse>
				<verse number="19">ದೇವರು ಒಬ್ಬರೇ ಎಂದು ನೀವು ನಂಬುತ್ತೀರಿ. ಈ ನಂಬಿಕೆ ಒಳ್ಳೆಯದೇ. ಆದರೆ ದೆವ್ವಗಳೂ ನಂಬುತ್ತವೆ; ಹೆದರಿ ನಡುಗುತ್ತವೆ.</verse>
				<verse number="20">ಮತಿಹೀನನೇ, ಸತ್ಕ್ರಿಯೆಗಳಿಲ್ಲದ ವಿಶ್ವಾಸ ಗೊಡ್ಡು ವಿಶ್ವಾಸ ಎಂಬುದಕ್ಕೆ ದೃಷ್ಟಾಂತ ಬೇಕೇ?</verse>
				<verse number="21">ನಮ್ಮ ಪಿತಾಮಹ ಅಬ್ರಹಾಮನು ದೇವರೊಂದಿಗೆ ಸತ್ಸಂಬಂಧವನ್ನು ಪಡೆದುದ್ದಾದರೂ ಹೇಗೆ? ತನ್ನ ಮಗ ಇಸಾಕನನ್ನು ದೇವರಿಗೆ ಬಲಿಯಾಗಿ ಸಮರ್ಪಿಸಿದ ಸತ್ಕ್ರಿಯೆಯಿಂದಲ್ಲವೇ? ವಿಶ್ವಾಸವು ಸತ್ಕ್ರಿಯೆಗಳಿಂದ ಸಚೇತನಗೊಂಡಿತು.</verse>
				<verse number="22">ಆತನ ಸತ್ಕ್ರಿಯೆಗಳಿಂದಲೇ ವಿಶ್ವಾಸವು ಸಿದ್ಧಿಗೆ ಬಂದಿತು ಎಂಬುದನ್ನು ನಾವು ನೋಡುತ್ತೇವೆ.</verse>
				<verse number="23">ಆದುದರಿಂದಲೇ, “ಅಬ್ರಹಾಮನು ದೇವರಲ್ಲಿ ವಿಶ್ವಾಸ ಇಟ್ಟನು. ದೇವರು ಆತನನ್ನು ತಮ್ಮ ಸತ್ಸಂಬಂಧದಲ್ಲಿ ಇರುವುದಾಗಿ ಪರಿಗಣಿಸಿದರು,” ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ಮಾತು ನೆರವೇರಿತು. ಅಬ್ರಹಾಮನು ದೇವರ ಮಿತ್ರನೆನಿಸಿಕೊಂಡನು.</verse>
				<verse number="24">ಮಾನವನು ದೇವರೊಡನೆ ಸತ್ಸಂಬಂಧವನ್ನು ಪಡೆಯುವುದು ವಿಶ್ವಾಸದಿಂದ ಮಾತ್ರವಲ್ಲ, ವಿಶ್ವಾಸವು ಸತ್ಕ್ರಿಯೆಗಳೊಡನೆ ಬೆರೆತಾಗ ಮಾತ್ರ ಎಂಬುದು ನಿಮಗೆ ತಿಳಿದಿರಲಿ.</verse>
				<verse number="25">ಇದೇ ರೀತಿಯಾಗಿ ರಹಾಬಳೆಂಬ ಜಾರಿಣಿ ಗೂಢಚಾರರನ್ನು ತನ್ನ ಮನೆಗೆ ಸೇರಿಸಿಕೊಂಡು ಬೇರೆ ದಾರಿಯಿಂದ ಅವರನ್ನು ಸಾಗಕಳುಹಿಸಿದಳು. ಈ ಸತ್ಕ್ರಿಯೆಯಿಂದಲೇ ದೇವರೊಡನೆ ನೀತಿಯುತ ಸಂಬಂಧವನ್ನು ಪಡೆದಳು.</verse>
				<verse number="26">ಆತ್ಮವಿಲ್ಲದ ದೇಹವು ಸತ್ತದ್ದು; ಸತ್ಕ್ರಿಯೆಗಳಿಲ್ಲದ ವಿಶ್ವಾಸವೂ ಸತ್ತದ್ದೇ ಸರಿ.</verse>
			</chapter>
			<chapter number="3">
				<verse number="1">ಸಹೋದರರೇ, ಎಲ್ಲರೂ ಬೋಧಕರಾಗಲು ಆತುರಪಡಬೇಡಿ. ಬೋಧಕರಾದ ನಾವು ಇತರರಿಗಿಂತಲೂ ತೀವ್ರವಾದ ನ್ಯಾಯವಿಚಾರಣೆಗೆ ಗುರಿಯಾಗುತ್ತೇವೆ.</verse>
				<verse number="2">ನಾವೆಲ್ಲರೂ ಎಷ್ಟೋ ವಿಷಯಗಳಲ್ಲಿ ತಪ್ಪುಮಾಡುವುದುಂಟು. ತನ್ನ ಮಾತಿನಲ್ಲಿ ತಪ್ಪುಮಾಡದೆ ಪೂರ್ತಿಯಾಗಿ ತನ್ನನ್ನೇ ಸ್ವಾಧೀನದಲ್ಲಿ ಇಟ್ಟುಕೊಳ್ಳುವ ವ್ಯಕ್ತಿ ಸಿದ್ಧಪುರುಷನೇ ಹೌದು.</verse>
				<verse number="3">ಕುದುರೆಗಳನ್ನು ಗಮನಿಸಿರಿ, ಅವುಗಳ ಬಾಯಿಗೆ ಹಾಕುವ ಚಿಕ್ಕ ಕಡಿವಾಣದಿಂದ ನಮಗೆ ಇಷ್ಟಬಂದ ಕಡೆಗೆ ಅವುಗಳನ್ನು ನಡೆಸುತ್ತೇವೆ.</verse>
				<verse number="4">ಅಂತೆಯೇ, ಹಡಗು ಎಷ್ಟೇ ದೊಡ್ಡದಿರಲಿ, ಎಂತಹ ಬಿರುಗಾಳಿಯ ಬಡಿತಕ್ಕೇ ಸಿಕ್ಕಿರಲಿ, ಕೇವಲ ಒಂದು ಚಿಕ್ಕ ಚುಕ್ಕಾಣಿಯಿಂದ ನಾವಿಕನು ತನಗೆ ಇಷ್ಟಬಂದ ಕಡೆಗೆ ಅದನ್ನು ತಿರುಗಿಸುತ್ತಾನೆ.</verse>
				<verse number="5">ನಾಲಿಗೆಯೂ ಹಾಗೆಯೇ. ಅದು ಶರೀರದ ಸಣ್ಣ ಅಂಗವಾಗಿದ್ದರೂ ಬಡಾಯಿ ಕೊಚ್ಚುವುದು ಬಹಳ. ಒಂದು ಸಣ್ಣ ಕಿಡಿಯು ದೊಡ್ಡ ಕಾಡನ್ನೇ ಸುಡಬಲ್ಲದು.</verse>
				<verse number="6">ನಾಲಿಗೆಯು ಆ ಬೆಂಕಿಯ ಕಿಡಿಯಂತೆ. ಅದು ಅಧರ್ಮಲೋಕದ ಪ್ರತೀಕ. ಅಂಗಾಂಗಗಳ ನಡುವೆ ಇದ್ದು ಇಡೀ ಶರೀರವನ್ನು ಮಲಿನಗೊಳಿಸುತ್ತದೆ. ನರಕಾಗ್ನಿಯಿಂದ ಹೊತ್ತಿಕೊಂಡು ಅದು ಬಾಳಿನ ಚಕ್ರಕ್ಕೆ ಬೆಂಕಿಯನ್ನು ಹಚ್ಚುತ್ತದೆ.</verse>
				<verse number="7">ಸಕಲ ಜಾತಿಯ ಪ್ರಾಣಿಪಕ್ಷಿಗಳನ್ನೂ ಹರಿದಾಡುವ ಜಂತುಗಳನ್ನೂ ಜಲಜೀವಿಗಳನ್ನೂ ಮಾನವ ಪಳಗಿಸಬಲ್ಲನು; ಪಳಗಿಸಿಯೂ ಇದ್ದಾನೆ.</verse>
				<verse number="8">ಆದರೆ ನಾಲಿಗೆಯನ್ನಾದರೋ ಹತೋಟಿಗೆ ತರಲು ಯಾರಿಗೂ ಸಾಧ್ಯವಿಲ್ಲ. ಅದು ಸತತ ಕೇಡನ್ನುಂಟುಮಾಡುವ ಕಿಡಿ; ಮೃತ್ಯುಮಾರಕ ವಿಷಕೊಂಡಿ.</verse>
				<verse number="9">ಪ್ರಭುವನ್ನೂ ಪರಮ ಪಿತನನ್ನೂ ಸ್ತುತಿಸುವುದು ಅದೇ ನಾಲಿಗೆಯೇ; ದೇವಸ್ವರೂಪದಲ್ಲಿ ಸೃಷ್ಟಿಸಲಾದ ಮಾನವನನ್ನು ಶಪಿಸುವುದೂ ಅದೇ ನಾಲಿಗೆಯೇ.</verse>
				<verse number="10">ಸ್ತುತಿ ಶಾಪಗಳೆರಡೂ ಒಂದೇ ಬಾಯಿಂದ ಹೊರಡುತ್ತವೆ. ಪ್ರಿಯ ಸಹೋದರರೇ, ಇದು ತರವಲ್ಲ.</verse>
				<verse number="11">ಒಂದೇ ಬುಗ್ಗೆಯಿಂದ ಸಿಹಿ ನೀರು, ಸೌಳು ನೀರು - ಎರಡೂ ಬರುವುದುಂಟೇ?</verse>
				<verse number="12">ಅಂಜೂರದ ಮರ ಓಲಿವ್ ಹಣ್ಣನ್ನು ಕೊಡುವುದುಂಟೇ? ದ್ರಾಕ್ಷಿಯ ಬಳ್ಳಿಯಲ್ಲಿ ಅಂಜೂರ ಸಿಕ್ಕೀತೇ? ಎಂದಿಗೂ ಇಲ್ಲ. ಅಂತೆಯೇ ಸೌಳು ನೀರಿನ ಒರತೆಯಿಂದ ಸಿಹಿ ನೀರು ಬರುವುದಿಲ್ಲ.</verse>
				<verse number="13">ನಿಮ್ಮಲ್ಲಿ ಯಾರಾದರೂ ಜ್ಞಾನಿಯೂ ವಿವೇಕಿಯೂ ಆದವನು ಇದ್ದಾನೋ? ಅಂಥವನು ಜ್ಞಾನದ ಲಕ್ಷಣವಾಗಿರುವ ವಿನಯಶೀಲತೆಯನ್ನು ತನ್ನ ನಡೆನುಡಿಯಲ್ಲಿ ತೋರ್ಪಡಿಸಲಿ.</verse>
				<verse number="14">ನಿಮ್ಮ ಹೃದಯದಲ್ಲಿ ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ತುಂಬಿರುವಾಗ ಜ್ಞಾನಿಗಳೆಂದು ಕೊಚ್ಚಿಕೊಳ್ಳಬೇಡಿ; ಸತ್ಯಕ್ಕೆ ವಿರುದ್ಧವಾಗಿ ಸುಳ್ಳಾಡಬೇಡಿ.</verse>
				<verse number="15">ಅಂಥ ಜ್ಞಾನ ದೇವರಿಂದ ಬಂದ ಜ್ಞಾನವಲ್ಲ; ಅದು ಪ್ರಾಪಂಚಿಕವಾದುದು, ಪ್ರಾಕೃತವಾದುದು, ಪೈಶಾಚಿಕವಾದುದು.</verse>
				<verse number="16">ಮರ್ಮಮತ್ಸರವೂ ಸ್ವಾರ್ಥಾಭಿಲಾಶೆಯೂ ಇರುವ ಕಡೆಗಳಲ್ಲೆಲ್ಲಾ ನಾನಾವಿಧವಾದ ಅಕ್ರಮಗಳೂ ದುಶ್ಚಟಗಳು ಇರುತ್ತವೆ.</verse>
				<verse number="17">ದೇವರಿಂದ ಬರುವ ಜ್ಞಾನವಾದರೋ ಮೊಟ್ಟಮೊದಲನೆಯದಾಗಿ ಪವಿತ್ರವಾದುದು. ಅದು ಶಾಂತಿಸಮಾಧಾನ ಉಳ್ಳದ್ದು. ಸಹನೆ ಸಂಯಮವುಳ್ಳದ್ದು, ನ್ಯಾಯಸಮ್ಮತವಾದದ್ದು, ದಯೆದಾಕ್ಷಿಣ್ಯಗಳಿಂದಲೂ ಸತ್ಕಾರ್ಯಗಳಿಂದಲೂ ಫಲಭರಿತವಾದದ್ದು. ವಂಚನೆಯಾಗಲಿ, ಚಂಚಲತೆಯಾಗಲಿ ಅದರಲ್ಲಿ ಇರುವುದಿಲ್ಲ.</verse>
				<verse number="18">ಸಮಾಧಾನಪಡಿಸುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ದೇವರೊಡನೆ ಸತ್ಸಂಬಂಧವೆಂಬ ಫಲವನ್ನು ಕೊಯ್ಯುತ್ತಾರೆ.</verse>
			</chapter>
			<chapter number="4">
				<verse number="1">ನಿಮ್ಮಲ್ಲಿ ಕಲಹ ಕಾದಾಟಗಳು ಉಂಟಾಗುವುದು ಹೇಗೆ? ನಿಮ್ಮ ಇಂದ್ರಿಯಗಳಲ್ಲಿ ಗೊಂದಲವೆಬ್ಬಿಸುವ ದುರಿಚ್ಛೆಗಳಿಂದಲ್ಲವೇ?</verse>
				<verse number="2">ಪರರ ಆಸ್ತಿಪಾಸ್ತಿಗಳನ್ನು ಬಯಸುತ್ತೀರಿ; ಅವುಗಳು ಸಿಗದೆ ಇದ್ದಾಗ, ನೀವು ಕೊಲೆಮಾಡಲೂ ಹಿಂಜರಿಯುವುದಿಲ್ಲ. ದುರಾಶೆಗಳಿಗೆ ಬಲಿಯಾಗುತ್ತೀರಿ; ಅವುಗಳು ಈಡೇರದಾಗ ಜಗಳವಾಡುತ್ತೀರಿ, ಕಾದಾಡುತ್ತೀರಿ. ನಿಮಗೆ ಬೇಕಾದುದು ನಿಮ್ಮಲ್ಲಿಲ್ಲ. ಏಕೆಂದರೆ, ನೀವು ಅದಕ್ಕಾಗಿ ಬೇಡಿಕೊಳ್ಳಲಿಲ್ಲ.</verse>
				<verse number="3">ಬೇಡಿಕೊಂಡರೂ ನಿಮಗದು ದೊರಕುವುದಿಲ್ಲ. ಏಕೆಂದರೆ, ನಿಮ್ಮ ಬೇಡಿಕೆ ದುರುದ್ದೇಶದಿಂದ ಕೂಡಿರುತ್ತದೆ. ಭೋಗಾಭಿಲಾಶೆಗಳ ಈಡೇರಿಕೆ ನಿಮ್ಮ ಗುರಿಯಾಗಿರುತ್ತದೆ.</verse>
				<verse number="4">ವಿಶ್ವಾಸದಲ್ಲಿ ವ್ಯಭಿಚಾರಿಗಳಂತೆ ಬಾಳುವವರೇ, ಲೋಕದೊಡನೆ ಗೆಳೆತನವೆಂದರೆ ದೇವರೊಡನೆ ಹಗೆತನವೆಂಬುದು ನಿಮಗೆ ತಿಳಿಯದೇ? ಲೋಕದೊಡನೆ ಗೆಳೆತನವನ್ನು ಬಯಸುವವನು ದೇವರೊಡನೆ ಹಗೆತನವನ್ನು ಬೆಳೆಸುತ್ತಾನೆ.</verse>
				<verse number="5">“ದೇವರು ನಮ್ಮಲ್ಲಿ ಇರುವ ಆತ್ಮವನ್ನು ಅತ್ಯಾಸಕ್ತಿಯಿಂದ ಅಪೇಕ್ಷಿಸುತ್ತಾರೆ,” ಎಂಬ ಪವಿತ್ರಗ್ರಂಥದ ವಾಕ್ಯವು ಹುರುಳಿಲ್ಲದ್ದೆಂದು ಭಾವಿಸುವಿರಾ?</verse>
				<verse number="6">ದೇವರು ನಮಗೆ ದಯಪಾಲಿಸುವ ವರಪ್ರಸಾದ ಅತ್ಯಧಿಕವಾದುದು. ಎಂತಲೇ, “ದೇವರು ಗರ್ವಿಷ್ಠರನ್ನು ವಿರೋಧಿಸುತ್ತಾರೆ. ದೀನದಲಿತರಿಗೆ ಕೃಪಾವರವನ್ನು ಅನುಗ್ರಹಿಸುತ್ತಾರೆ,” ಎಂದು ಲಿಖಿತವಾಗಿದೆ.</verse>
				<verse number="7">ಆದ್ದರಿಂದ ದೇವರಿಗೆ ಶರಣರಾಗಿ ಬಾಳಿ, ಸೈತಾನನನ್ನು ಎದುರಿಸಿ ನಿಲ್ಲಿ. ಅವನು ನಿಮ್ಮಿಂದ ಪಲಾಯನಗೈಯುವನು.</verse>
				<verse number="8">ದೇವರ ಸಮೀಪಕ್ಕೆ ಬನ್ನಿ, ಆಗ ಅವರು ನಿಮ್ಮ ಸಮೀಪಕ್ಕೆ ಬರುವರು. ಪಾಪಾತ್ಮರೇ, ನಿಮ್ಮ ಕೈ ಶುದ್ಧವಾಗಿರಲಿ. ಎರಡು ಮನಸ್ಸಿನವರೇ, ನಿಮ್ಮ ಹೃದಯ ನಿರ್ಮಲವಾಗಿರಲಿ.</verse>
				<verse number="9">ನಿಮ್ಮ ಹೀನಸ್ಥಿತಿಗಾಗಿ ವ್ಯಥೆಪಡಿರಿ. ಕಣ್ಣೀರಿಟ್ಟು ಗೋಳಾಡಿರಿ. ನಗುವುದನ್ನು ಬಿಟ್ಟು ದುಃಖಿಸಿರಿ; ಸಂತೋಷವನ್ನು ಬಿಟ್ಟು ಶೋಕಿಸಿರಿ.</verse>
				<verse number="10">ಪ್ರಭುವಿನ ಮುಂದೆ ನಮ್ರರಾಗಿರಿ. ಆಗ ಅವರು ನಿಮ್ಮನ್ನು ಉದ್ಧರಿಸುವರು.</verse>
				<verse number="11">ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿ. ಯಾರಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ಖಂಡಿಸಿದರೆ, ಅಂಥವನು ಧರ್ಮಶಾಸ್ತ್ರವನ್ನೇ ನಿಂದಿಸಿ ಖಂಡಿಸುತ್ತಾನೆ. ನೀನು ಧರ್ಮಶಾಸ್ತ್ರವನ್ನುಖಂಡಿಸಿದರೆ, ನ್ಯಾಯಾಧಿಪತಿ ಎನಿಸಿಕೊಳ್ಳುವೆಯೇ ಹೊರತು ನೀನು ಅದನ್ನು ಅನುಸರಿಸಿ ನಡೆಯುವವನಾಗುವುದಿಲ್ಲ.</verse>
				<verse number="12">ನ್ಯಾಯವಿಧಿಗಳನ್ನು ಕೊಟ್ಟವರೂ ನ್ಯಾಯಾಧಿಪತಿಯೂ ಒಬ್ಬರೇ; ಅವರೇ ಉದ್ಧಾರಮಾಡುವುದಕ್ಕೂ ವಿನಾಶಗೊಳಿಸುವುದಕ್ಕೂ ಶಕ್ತರು. ಹೀಗಿರುವಲ್ಲಿ, ನಿನ್ನ ನೆರೆಯವನಿಗೆ ತೀರ್ಪುಕೊಡಲು ನೀನು ಯಾರು?</verse>
				<verse number="13">“ಇಂಥಿಂಥ ದಿನ ಇಂಥಿಂಥ ಪಟ್ಟಣಕ್ಕೆ ಹೋಗೋಣ, ಅಲ್ಲಿ ಒಂದು ವರ್ಷ ಇದ್ದು ವ್ಯಾಪಾರ ಮಾಡೋಣ; ಅತಿಯಾಗಿ ಲಾಭ ಸಂಪಾದಿಸೋಣ,” ಎಂದೆಲ್ಲಾ ಆಲೋಚಿಸುವವರೇ, ಈಗ ಕೇಳಿ: ನೀವು ಇಷ್ಟೆಲ್ಲಾ ಆಲೋಚಿಸಿದರೂ ನಾಳೆ ಏನಾಗುವುದೋ ನಿಮಗೇ ತಿಳಿಯದು.</verse>
				<verse number="14">ನಿಮ್ಮ ಜೀವಮಾನ ಎಷ್ಟುಮಾತ್ರದ್ದು? ಈಗ ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹೊಗೆಯಂತೆ ಅದು.</verse>
				<verse number="15">ಆದ್ದರಿಂದ ನೀವು ಅಂಥ ಮಾತನ್ನು ಬಿಟ್ಟು, “ಪ್ರಭುವಿನ ಚಿತ್ತವಿದ್ದರೆ ನಾವು ಬದುಕಿರುತ್ತೇವೆ, ಇಂಥಿಂಥದ್ದನ್ನು ಮಾಡುತ್ತೇವೆ,” ಎಂದು ನೀವು ಹೇಳುವುದೇ ಸರಿ.</verse>
				<verse number="16">ಆದರೆ ನೀವು ಅಹಂಭಾವದಿಂದ ಕೊಚ್ಚಿಕೊಳ್ಳುತ್ತೀರಿ. ಹಾಗೆ ಕೊಚ್ಚಿಕೊಳ್ಳುವುದು ಸರಿಯಲ್ಲ.</verse>
				<verse number="17">ಒಬ್ಬನು ಒಳ್ಳೆಯದನ್ನು ಮಾಡಬೇಕೆಂದು ತಿಳಿದಿದ್ದೂ ಅದನ್ನು ಮಾಡದಿದ್ದರೆ ಅದು ಅವನಿಗೆ ಪಾಪವಾಗಿರುತ್ತದೆ.</verse>
			</chapter>
			<chapter number="5">
				<verse number="1">ಐಶ್ವರ್ಯವಂತರೇ, ಕೇಳಿ: ನಿಮಗೆ ಬರಲಿರುವ ಮಹಾಕಷ್ಟಗಳಿಗಾಗಿ ಕಣ್ಣೀರಿಡಿ, ಗೋಳಾಡಿರಿ.</verse>
				<verse number="2">ನಿಮ್ಮ ಐಶ್ವರ್ಯ ನಾಶವಾಗಿದೆ. ನಿಮ್ಮ ಬೆಲೆಬಾಳುವ ಬಟ್ಟೆಗಳಿಗೆ ನುಸಿಹತ್ತಿದೆ.</verse>
				<verse number="3">ನಿಮ್ಮ ಬೆಳ್ಳಿಬಂಗಾರಕ್ಕೆ ತುಕ್ಕುಹಿಡಿದಿದೆ. ಆ ತುಕ್ಕೇ ನಿಮಗೆ ವಿರುದ್ಧ ಸಾಕ್ಷಿಯಾಗಿ ನಿಮ್ಮನ್ನು ಬೆಂಕಿಯಂತೆ ದಹಿಸಿಬಿಡುತ್ತದೆ. ಅಂತ್ಯಕಾಲಕ್ಕಾಗಿ ನೀವು ಬೆಂಕಿಯನ್ನೇ ಶೇಖರಿಸಿಟ್ಟುಕೊಂಡಿದ್ದೀರಿ.</verse>
				<verse number="4">ನಿಮ್ಮ ಹೊಲಗಳಲ್ಲಿ ದುಡಿದ ಆಳುಗಳ ಕೂಲಿಯನ್ನು ಮೋಸದಿಂದ ಹಿಡಿದಿಟ್ಟುಕೊಂಡಿದ್ದೀರಿ. ನೀವು ಕೊಡದ ಕೂಲಿಯೇ ನಿಮಗೆ ವಿರುದ್ಧವಾಗಿ ಕೂಗಿಕೊಳ್ಳುತ್ತಿದೆ. ಕೂಲಿಯಾಳುಗಳ ಗೋಳಾಟ ಸ್ವರ್ಗಸೇನಾಧೀಶ್ವರನಾದ ಪ್ರಭುವಿನ ಕಿವಿಗೂ ಬಿದ್ದಿದೆ.</verse>
				<verse number="5">ಲೋಕದಲ್ಲಿ ನೀವು ಸುಖಭೋಗಿಗಳಾಗಿ ವಿಲಾಸ ಜೀವನ ನಡೆಸಿದ್ದೀರಿ. ವಧೆಯ ದಿನಕ್ಕಾಗಿ ಪಶುಗಳಂತೆ ನಿಮ್ಮನ್ನೇ ಕೊಬ್ಬಿಸಿಕೊಂಡಿದ್ದೀರಿ.</verse>
				<verse number="6">ನಿಮ್ಮನ್ನು ವಿರೋಧಿಸಿದ ಸಜ್ಜನನನ್ನು ಖಂಡಿಸಿ ಕೊಲೆಮಾಡಿಸಿದ್ದೀರಿ.</verse>
				<verse number="7">ಆದ್ದರಿಂದ ಸಹೋದರರೇ, ಪ್ರಭು ಪುನರಾಗಮಿಸುವವರೆಗೆ ತಾಳ್ಮೆಯಿಂದ ಇರಿ. ರೈತನನ್ನು ಗಮನಿಸಿರಿ: ತನ್ನ ಹೊಲದಲ್ಲಿ ಉತ್ತಮ ಬೆಳೆಯನ್ನು ನಿರೀಕ್ಷಿಸುವ ಅವನು ಮುಂಗಾರು ಹಿಂಗಾರು ಮಳೆಗಾಗಿ ತಾಳ್ಮೆಯಿಂದ ಕಾದಿರುತ್ತಾನೆ.</verse>
				<verse number="8">ಹಾಗೆಯೇ, ನೀವೂ ಸಹ ತಾಳ್ಮೆಯಿಂದಿರಿ, ದೃಢಚಿತ್ತರಾಗಿರಿ. ಪ್ರಭುವಿನ ಪುನರಾಗಮನ ಸನ್ನಿಹಿತವಾಗಿದೆ.</verse>
				<verse number="9">ಸಹೋದರರೇ, ದಂಡನಾತೀರ್ಪಿಗೆ ಗುರಿ ಆಗದಂತೆ ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿ. ಇಗೋ, ನ್ಯಾಯಾಧೀಶನು ಬಾಗಿಲ ಬಳಿಯಲ್ಲೇ ನಿಂತಿದ್ದಾನೆ.</verse>
				<verse number="10">ಸಹೋದರರೇ, ಸಂಕಷ್ಟಗಳನ್ನು ತಾಳ್ಮೆಯಿಂದ ಸಹಿಸಿದ್ದಕ್ಕೆ ನಿದರ್ಶನ ಬೇಕೇ? ಪ್ರಭುವಿನ ಹೆಸರಿನಲ್ಲಿ ಬೋಧಿಸಿದ ಪ್ರವಾದಿಗಳನ್ನು ಸ್ಮರಿಸಿಕೊಳ್ಳಿ.</verse>
				<verse number="11">ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ಯೋಬನ ತಾಳ್ಮೆಯನ್ನು ಕುರಿತು ನೀವು ಕೇಳಿದ್ದೀರಿ. ಅಂತ್ಯದಲ್ಲಿ ಆತನಿಗೆ ಸರ್ವೇಶ್ವರ ದಯಪಾಲಿಸಿದ್ದನ್ನು ಬಲ್ಲಿರಿ. ದೇವರ ದಯೆ ಅನಂತ, ಅವರ ಅನುಕಂಪ ಅಪಾರ.</verse>
				<verse number="12">ಮುಖ್ಯವಾಗಿ ಸಹೋದರರೇ, ಆಣೆಯಿಡಬೇಡಿ. ಪರಲೋಕದ ಮೇಲಾಗಲಿ, ಭೂಲೋಕದ ಮೇಲಾಗಲಿ, ಇನ್ನಾವುದರ ಮೇಲಾಗಲಿ ನೀವು ಆಣೆಯಿಡಬಾರದು. ಹೌದಾದರೆ ಹೌದು, ಇಲ್ಲವಾದರೆ ಇಲ್ಲ ಎನ್ನಿ. ಆಗ ನೀವು ದಂಡನಾತೀರ್ಪಿಗೆ ಗುರಿಯಾಗುವುದಿಲ್ಲ.</verse>
				<verse number="13">ನಿಮ್ಮಲ್ಲಿ ಯಾರಾದರೂ ಸಂಕಟದಲ್ಲಿದ್ದರೆ ಅಂಥವನು ದೇವರಲ್ಲಿ ಪ್ರಾರ್ಥಿಸಲಿ. ಸಂತೋಷದಲ್ಲಿದ್ದರೆ ದೇವರಿಗೆ ಸ್ತುತಿಗಾನ ಹಾಡಲಿ.</verse>
				<verse number="14">ನಿಮ್ಮಲ್ಲಿ ಯಾರಾದರೂ ಅಸ್ವಸ್ಥರಾಗಿದ್ದರೆ, ಅವನು ಸಭಾಪಾಲಕರನ್ನು ಕರೆಸಲಿ. ಅವರು ಅವನಿಗಾಗಿ ದೇವರನ್ನು ಪ್ರಾರ್ಥಿಸಿ ಪ್ರಭುವಿನ ಹೆಸರಿನಲ್ಲಿ ಅವನನ್ನು ಅಭ್ಯಂಗಿಸಲಿ.</verse>
				<verse number="15">ಆಗ ವಿಶ್ವಾಸಭರಿತ ಪ್ರಾರ್ಥನೆ ರೋಗಿಯನ್ನು ಗುಣಪಡಿಸುತ್ತದೆ. ಹಾಸಿಗೆ ಹಿಡಿದ ರೋಗಿಯನ್ನು ಪ್ರಭು ಎಬ್ಬಿಸುತ್ತಾರೆ; ಅವನು ಪಾಪಮಾಡಿದವನಾಗಿದ್ದರೆ ಕ್ಷಮೆಯನ್ನು ಪಡೆಯುತ್ತಾನೆ.</verse>
				<verse number="16">ಆದ್ದರಿಂದ ಒಬ್ಬರಿಗೊಬ್ಬರು ಪಾಪಗಳನ್ನು ಒಪ್ಪಿಕೊಳ್ಳಿರಿ. ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ಆಗ ನೀವು ಸ್ವಸ್ಥರಾಗುತ್ತೀರಿ. ಸತ್ಪುರುಷನ ಪ್ರಾರ್ಥನೆ ಶಕ್ತಿಯುತವಾದುದು ಹಾಗೂ ಫಲದಾಯಕವಾದುದು.</verse>
				<verse number="17">ಎಲೀಯನು ನಮ್ಮಂಥ ಸಾಧಾರಣ ಮನುಷ್ಯ. ಆದರೂ ಅವನು ಮಳೆ ಬಾರದಿರಲೆಂದು ಭಕ್ತಿಯಿಂದ ಪ್ರಾರ್ಥಿಸಿದ್ದರಿಂದ ಮೂರು ವರ್ಷ ಆರು ತಿಂಗಳವರೆಗೂ ಮಳೆ ಬೀಳಲಿಲ್ಲ.</verse>
				<verse number="18">ಅನಂತರ, ಅವನು ಮತ್ತೆ ಮಳೆಗಾಗಿ ಪ್ರಾರ್ಥಿಸಿದಾಗ ಆಕಾಶದಿಂದ ಮಳೆ ಸುರಿಯಿತು. ಭೂಮಿ ಫಲಿಸಿತು.</verse>
				<verse number="19">ಸಹೋದರರೇ, ನಿಮ್ಮಲ್ಲಿ ಒಬ್ಬನು ಸತ್ಯದ ಮಾರ್ಗವನ್ನು ಬಿಟ್ಟು ತಪ್ಪಿಹೋದಾಗ ಇನ್ನೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ,</verse>
				<verse number="20">ಇದನ್ನು ನೆನಪಿಗೆ ತಂದುಕೊಳ್ಳಿರಿ: ಪಾಪಿಯನ್ನು ದುರ್ಮಾರ್ಗದಿಂದ ಮರಳಿ ಸನ್ಮಾರ್ಗಕ್ಕೆ ತಂದವನು ತನ್ನ ಆತ್ಮವನ್ನು ನಿತ್ಯ ಮರಣದಿಂದ ತಪ್ಪಿಸಿ ತನ್ನ ಲೆಕ್ಕವಿಲ್ಲದ ಪಾಪಗಳಿಗೆ ಕ್ಷಮೆಯನ್ನು ಪಡೆಯುತ್ತಾನೆ.</verse>
			</chapter>
		</book>
		<book number="60">
			<chapter number="1">
				<verse number="1">ಪೊಂತ, ಗಲಾತ್ಯ, ಕಪ್ಪದೋಕ್ಯ, ಏಷ್ಯಾ, ಬಿಥೂನಿಯ ಪ್ರಾಂತ್ಯಗಳಲ್ಲಿ ಚದರಿಹೋಗಿ ನಿರಾಶ್ರಿತರಂತೆ ಜೀವಿಸುತ್ತಿರುವ ದೇವಜನರಿಗೆ - ಯೇಸುಕ್ರಿಸ್ತರ ಪ್ರೇಷಿತನಾದ ಪೇತ್ರನು ಬರೆಯುವ ಪತ್ರ:</verse>
				<verse number="2">ನೀವು ಯೇಸುಕ್ರಿಸ್ತರಿಗೆ ಶರಣಾಗಿ ಅವರ ರಕ್ತದಿಂದ ಶುದ್ಧೀಕರಣಹೊಂದಲು ತಂದೆಯಾದ ದೇವರ ಸಂಕಲ್ಪಾನುಸಾರ ಆಯ್ಕೆಯಾದವರು; ಅವರ ಆತ್ಮದ ಮುಖಾಂತರ ಪವಿತ್ರೀಕರಿಸಲಾದವರು. ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಸಮೃದ್ಧಿಯಾಗಿ ಲಭಿಸಲಿ!</verse>
				<verse number="3">ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.</verse>
				<verse number="4">ಹೀಗೆ ಅವರು, ತಮ್ಮ ಸ್ವಂತ ಜನರಿಗಾಗಿ ಸ್ವರ್ಗದಲ್ಲಿ ಕಾದಿರಿಸಿರುವ ಅಳಿಯದ, ಅಕ್ಷಯವಾದ, ಅನಂತವಾದ ಸಿರಿಸಂಪತ್ತಿಗೆ ನಿಮ್ಮನ್ನು ಬಾಧ್ಯರನ್ನಾಗಿ ಮಾಡಿದ್ದಾರೆ.</verse>
				<verse number="5">ಅಂತ್ಯಕಾಲದಲ್ಲಿ ಪ್ರತ್ಯಕ್ಷವಾಗಲಿರುವ ಜೀವೋದ್ಧಾರವು ವಿಶ್ವಾಸಿಗಳಾದ ನಿಮಗೆ ಲಭಿಸುವಂತೆ ದೇವರು ತಮ್ಮ ಶಕ್ತಿಯಿಂದ ನಿಮ್ಮನ್ನು ಕಾಪಾಡುತ್ತಾರೆ.</verse>
				<verse number="6">ಸದ್ಯಕ್ಕೆ ನೀವು ಕೊಂಚಕಾಲ ಹಲವಿಧವಾದ ಪರಿಶೋಧನೆಗಳ ನಿಮಿತ್ತ ದುಃಖವನ್ನು ಅನುಭವಿಸಬೇಕಾಗಿದ್ದರೂ ಪ್ರತ್ಯಕ್ಷವಾಗಲಿರುವ ಆ ಸಿರಿಸಂಪತ್ತನ್ನು ಜ್ಞಾಪಿಸಿಕೊಂಡು ಹರ್ಷಚಿತ್ತರಾಗಿರಿ.</verse>
				<verse number="7">ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.</verse>
				<verse number="8">ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.</verse>
				<verse number="9">ಇದರ ಅಂತಿಮ ಫಲವಾಗಿ ಜೀವೋದ್ಧಾರವನ್ನು ಪಡೆಯುತ್ತೀರಿ. ಈ ಕಾರಣದಿಂದ ಅವರ್ಣನೀಯವಾದ ಮಹದಾನಂದದಿಂದ ನಲಿಯುತ್ತೀರಿ.</verse>
				<verse number="10">ಈ ಜೀವೋದ್ಧಾರವನ್ನು ಕುರಿತೇ ಪ್ರವಾದಿಗಳು ಸೂಕ್ಷ್ಮವಾಗಿ ವಿಚಾರಿಸಿ ಸಂಶೋಧನೆ ನಡೆಸಿದರು. ದೇವರು ನಿಮಗೆ ಕೊಡಲಿದ್ದ ಈ ವರವನ್ನು ಕುರಿತೇ ಅವರು ಪ್ರವಾದಿಸಿದರು.</verse>
				<verse number="11">ಕ್ರಿಸ್ತಯೇಸು ಅನುಭವಿಸಬೇಕಾಗಿದ್ದ ಮರಣವನ್ನು, ಯಾತನೆಯನ್ನು ಮತ್ತು ಅನಂತರದ ಪುನರುತ್ಥಾನದ ಮಹಿಮೆಯನ್ನು ಈ ಪ್ರವಾದಿಗಳು ಪ್ರವಾದಿಸುವಾಗ, ತಮ್ಮಲ್ಲಿದ್ದ ಕ್ರಿಸ್ತಾತ್ಮವು ಇದಕ್ಕೆ ಯಾವ ಸಮಯ ಸಂದರ್ಭವನ್ನು ಸೂಚಿಸುತ್ತದೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸಿದರು.</verse>
				<verse number="12">ಈ ಸೇವಾಕಾರ್ಯವನ್ನು ಅವರು ಸ್ವಾರ್ಥಸಾಧನೆಗಾಗಿ ಅಲ್ಲ, ನಿಮಗೋಸ್ಕರವಾಗಿಯೇ ಮಾಡುತ್ತಿರುವುದಾಗಿ ಅವರಿಗೆ ತಿಳಿಸಲಾಗಿತ್ತು. ಅವರು ಪ್ರವಾದಿಸಿದ ಘಟನೆಗಳು ಈಗ ಸಂಭವಿಸಿವೆ ಎಂಬುದನ್ನು ಸ್ವರ್ಗದಿಂದ ಕಳುಹಿಸಲಾದ ಪವಿತ್ರಾತ್ಮರ ಶಕ್ತಿಯಿಂದ, ಶುಭಸಂದೇಶವನ್ನು ಸಾರಿದವರ ಮುಖಾಂತರ ನಿಮಗೆ ಪ್ರಕಟಿಸಲಾಗಿದೆ. ದೇವದೂತರು ಸಹ ವೀಕ್ಷಿಸಲು ಅಪೇಕ್ಷಿಸುವಂಥ ಸಂಗತಿಗಳಿವು.</verse>
				<verse number="13">ಆದ್ದರಿಂದ ನೀವು ಸ್ವಸ್ಥಚಿತ್ತರಾಗಿರಿ. ನಿಮ್ಮ ಮನಸ್ಸು ಕಾರ್ಯೋನ್ಮುಖವಾಗಿರಲಿ. ಯೇಸುಕ್ರಿಸ್ತರು ಪ್ರತ್ಯಕ್ಷವಾಗುವಾಗ ನಿಮಗೆ ಲಭಿಸಲಿರುವ ಸೌಭಾಗ್ಯದಲ್ಲಿ ಪೂರ್ಣ ನಿರೀಕ್ಷೆ ಉಳ್ಳವರಾಗಿರಿ.</verse>
				<verse number="14">ವಿಧೇಯರಾದ ಮಕ್ಕಳಂತೆ ನಡೆದುಕೊಳ್ಳಿ. ನೀವು ಅಜ್ಞಾನಿಗಳಾಗಿದ್ದಾಗ ದುರಿಚ್ಛೆಗಳಿಗೆ ಈಡಾಗಿದ್ದಿರಿ; ಈಗ ಅವುಗಳಿಗೆ ಎಡೆಕೊಡಬೇಡಿ.</verse>
				<verse number="15">ಅದಕ್ಕೆ ಬದಲು ನಿಮ್ಮನ್ನು ಕರೆದ ದೇವರು ಪವಿತ್ರರಾಗಿರುವಂತೆ ನೀವೂ ನಿಮ್ಮ ನಡೆನುಡಿಯಲ್ಲಿ ಪವಿತ್ರರಾಗಿರಿ.</verse>
				<verse number="16">ಏಕೆಂದರೆ, “ನಾನು ಪವಿತ್ರನಾಗಿರುವುದರಿಂದ ನೀವೂ ಪವಿತ್ರರಾಗಿರಿ,” ಎಂದು ಲಿಖಿತವಾಗಿದೆ.</verse>
				<verse number="17">ನೀವು ದೇವರಿಗೆ ಪ್ರಾರ್ಥನೆಮಾಡುವಾಗ, ಅವರನ್ನು “ತಂದೆಯೇ” ಎಂದು ಸಂಬೋಧಿಸುತ್ತೀರಿ. ಅವರು ಪಕ್ಷಪಾತಿ ಅಲ್ಲ. ಎಲ್ಲರಿಗೂ ಅವರವರ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ನೀಡುವವರು. ಆದ್ದರಿಂದ ನಿಮ್ಮ ಇಹಲೋಕದ ಯಾತ್ರೆಯನ್ನು ಭಯಭಕ್ತಿಯಿಂದ ಸಾಗಿಸಿರಿ.</verse>
				<verse number="18">ನಿಮ್ಮ ಪೂರ್ವಜರಿಂದ ಪರಂಪರೆಯಾಗಿ ಬಂದಿರುವ ನಿರರ್ಥಕ ನಡವಳಿಕೆಯಿಂದ ನಿಮ್ಮನ್ನು ಬಿಡುಗಡೆಮಾಡಲು ಕೊಡಲಾದ ಬೆಲೆಯು ಎಂಥದ್ದೆಂದು ನಿಮಗೆ ತಿಳಿದಿದೆ. ಅದು ನಶಿಸಿಹೋಗುವ ಬೆಳ್ಳಿಬಂಗಾರವಲ್ಲ.</verse>
				<verse number="19">ಬದಲಿಗೆ, ಯಾವ ನ್ಯೂನತೆಯೂ ಇಲ್ಲದ, ಯಾವ ಕಳಂಕವೂ ಇಲ್ಲದ ಬಲಿಯ ಕುರಿಮರಿಯಂಥ ಕ್ರಿಸ್ತಯೇಸುವಿನ ಅಮೂಲ್ಯ ರಕ್ತವೇ ಆ ಬೆಲೆ.</verse>
				<verse number="20">ವಿಶ್ವಸೃಷ್ಟಿಗೆ ಮೊದಲೇ ಯೇಸುಕ್ರಿಸ್ತರನ್ನು ದೇವರು ಇದಕ್ಕೆಂದು ಗೊತ್ತುಮಾಡಿದ್ದರು. ಈ ಅಂತಿಮ ದಿನಗಳಲ್ಲಿ ನಿಮಗೋಸ್ಕರ ಯೇಸು ಪ್ರತ್ಯಕ್ಷರಾದರು.</verse>
				<verse number="21">ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.</verse>
				<verse number="22">ಸತ್ಯಕ್ಕೆ ಶರಣಾಗಿ ಆತ್ಮಶುದ್ಧಿಹೊಂದಿರುವ ನೀವು ಸಹೋದರರನ್ನು ನಿಷ್ಕಪಟದಿಂದ ಪ್ರೀತಿಸಬಲ್ಲಿರಿ. ಎಂದೇ, ಒಬ್ಬರನ್ನೊಬ್ಬರು ಹೃತ್ಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.</verse>
				<verse number="23">ನೀವು ಸಜೀವವಾದ ಅನಂತ ದೈವವಾಕ್ಯದ ಮೂಲಕ ಹೊಸಜನ್ಮವನ್ನು ಪಡೆದಿದ್ದೀರಿ; ಈ ಜನ್ಮವನ್ನು ನೀವು ಪಡೆದಿರುವುದು ಮರ್ತ್ಯಮಾನವನಿಂದಲ್ಲ, ಅಮರ ದೇವರಿಂದ.</verse>
				<verse number="24">ಪವಿತ್ರಗ್ರಂಥದಲ್ಲಿ ಬರೆದಿರುವಂತೆ: ನರಮಾನವರೆಲ್ಲರೂ ಗರಿಹುಲ್ಲಿನಂತೆ ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತೆ. ಹುಲ್ಲೊಣಗಿ ಹೂ ಬಾಡಿಬೀಳುವುದು ಪ್ರಭುವಿನ ವಾಕ್ಯವಾದರೋ ಶಾಶ್ವತವಾಗಿ ನಿಲ್ಲುವುದು.</verse>
				<verse number="25">ಈ ವಾಕ್ಯವೇ ನಿಮಗೆ ಸಾರಲಾದ ಶುಭಸಂದೇಶ.</verse>
			</chapter>
			<chapter number="2">
				<verse number="1">ಎಲ್ಲಾ ಕೆಟ್ಟತನವನ್ನು ಬಿಟ್ಟುಬಿಡಿ. ಸುಳ್ಳಾಡುವುದಾಗಲಿ, ವಂಚಿಸುವುದಾಗಲಿ, ಅಸೂಯೆಪಡುವುದಾಗಲಿ, ಪರದೂಷಣೆಮಾಡುವುದಾಗಲಿ ನಿಮ್ಮಲ್ಲಿ ಇರಬಾರದು.</verse>
				<verse number="2">ಹೊಸ ಜನ್ಮಪಡೆದ ಶಿಶುಗಳಂತೆ, ಶುದ್ಧವಾದ ಆಧ್ಯಾತ್ಮಿಕ ಹಾಲಿಗಾಗಿ ಹಂಬಲಿಸಿರಿ; ಅದನ್ನು ಕುಡಿದು ಬೆಳೆಯುತ್ತಾ ಜೀವೋದ್ಧಾರವನ್ನು ಹೊಂದುವಿರಿ.</verse>
				<verse number="3">“ಪ್ರಭು ಎಂಥಾ ದಯಾಳು ಎಂಬುದನ್ನು ನೀವು ಅನುಭವದಿಂದ ಅರಿತುಕೊಂಡಿದ್ದೀರಿ.”</verse>
				<verse number="4">ಪ್ರಭುವಿನ ಬಳಿಗೆ ಬನ್ನಿ; ಸಜೀವ ಶಿಲೆಯಾದ ಅವರನ್ನು ಮಾನವರು ನಿಷ್ಪ್ರಯೋಜಕ ಎಂದು ತಿರಸ್ಕರಿಸಿದರೂ ದೇವರು ಅಮೂಲ್ಯರೆಂದು ಆರಿಸಿಕೊಂಡರು.</verse>
				<verse number="5">ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.</verse>
				<verse number="6">ಈ ಕಾರಣದಿಂದಲೇ ಪವಿತ್ರಗ್ರಂಥ ಇಂತೆನ್ನುತ್ತದೆ: “ಅಮೂಲ್ಯ ಶಿಲೆಯೊಂದನ್ನು ನಾನಾರಿಸಿಕೊಂಡೆ. ಸಿಯೋನಿನಲ್ಲಿ ಅದನ್ನೇ ಮುಖ್ಯ ಮೂಲೆಗಲ್ಲನ್ನಾಗಿರಿಸಿದೆ. ಎಂದಿಗೂ ಆಶಾಭಂಗವಾಗದು ಅದರ ಮೇಲೆ ವಿಶ್ವಾಸವಿಡುವವರಿಗೆ.”</verse>
				<verse number="7">ವಿಶ್ವಾಸವಿಟ್ಟಿರುವ ನಿಮಗಂತೂ ಈ ಶಿಲೆ ಅತ್ಯಮೂಲ್ಯವಾದುದು. “ಮನೆಕಟ್ಟುವವರು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು.”</verse>
				<verse number="8">“ಜನರು ಎಡವಿಬೀಳುವ ಕಲ್ಲಿದು; ಅವರು ಮುಗ್ಗರಿಸಿ ಬೀಳುವ ಬಂಡೆಯಿದು.” ವಿಶ್ವಾಸವಿಡದವರಿಗಾದರೋ ಮೇಲಿನ ವಾಕ್ಯಗಳು ಅನ್ವಯಿಸುತ್ತವೆ. ಜನರು ದೇವರ ವಾಕ್ಯದಲ್ಲಿ ವಿಶ್ವಾಸವಿಡದಿರುವುದರಿಂದಲೇ ಎಡವಿಬೀಳುತ್ತಾರೆ. ಅವರ ಬಗ್ಗೆ ದೈವಸಂಕಲ್ಪವೂ ಇದೇ ಆಗಿತ್ತು.</verse>
				<verse number="9">ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.</verse>
				<verse number="10">ಒಮ್ಮೆ ನೀವು ಗಣನೆಗೆ ಬಾರದ ಜನಗಳಾಗಿದ್ದಿರಿ, ಈಗಲಾದರೋ ದೇವಪ್ರಜೆಗಳೇ ಆಗಿದ್ದೀರಿ. ಹಿಂದೊಮ್ಮೆ, ದೇವರ ಕರುಣೆ ಏನೆಂಬುದೇ ನಿಮಗೆ ತಿಳಿದಿರಲಿಲ್ಲ. ಈಗ ಅವರ ಕರುಣೆಯನ್ನು ಸವಿದಿದ್ದೀರಿ.</verse>
				<verse number="11">ಪ್ರಿಯರೇ, ಈ ಲೋಕದಲ್ಲಿ ಆಗಂತುಕರಂತೆಯೂ ಅಪರಿಚಿತರಂತೆಯೂ ಬಾಳುವ ನೀವು ಆತ್ಮಕ್ಕೆ ವಿರುದ್ಧ ಹೋರಾಡುವ ದೈಹಿಕ ವ್ಯಾಮೋಹಗಳಿಂದ ದೂರವಿರಬೇಕೆಂದು ನಿಮ್ಮನ್ನು ಕೇಳಿಕೊಳ್ಳುತ್ತೇನೆ.</verse>
				<verse number="12">ಅನ್ಯಧರ್ಮೀಯರ ಮಧ್ಯೆ ನಿಮ್ಮ ನಡತೆ ಆದರ್ಶಪ್ರಾಯವಾಗಿರಲಿ. ಅವರು ನಿಮ್ಮನ್ನು ದುಷ್ಕರ್ಮಿಗಳೆಂದು ದೂಷಿಸಿದರೂ ನಿಮ್ಮ ಸತ್ಕಾರ್ಯಗಳನ್ನು ಮೆಚ್ಚಿಕೊಂಡು ಕ್ರಿಸ್ತಯೇಸುವಿನ ಪುನರಾಗಮನದ ದಿನದಂದು ದೇವರನ್ನು ಕೊಂಡಾಡುವರು.</verse>
				<verse number="13">ಎಲ್ಲ ಮಾನವ ಅಧಿಕಾರಿಗಳಿಗೂ ಪ್ರಭುವಿನ ನಿಮಿತ್ತ ಅಧೀನರಾಗಿರಿ. ಸಕಲ ಅಧಿಕಾರವನ್ನು ಪಡೆದಿರುವ ದೇಶಾಧಿಕಾರಿಗೆ ಅಧೀನರಾಗಿ ನಡೆಯಿರಿ.</verse>
				<verse number="14">ದುಷ್ಟರನ್ನು ಶಿಕ್ಷಿಸುವುದಕ್ಕೂ ಶಿಷ್ಟರನ್ನು ಪ್ರಶಂಸಿಸುವುದಕ್ಕೂ ಆತನಿಂದ ನೇಮಿತವಾಗಿರುವ ರಾಜ್ಯಪಾಲರಿಗೂ ಅಧೀನರಾಗಿ ಬಾಳಿರಿ.</verse>
				<verse number="15">ನಿಮ್ಮ ಒಳ್ಳೆಯ ನಡತೆಯಿಂದ, ಅರಿವಿಲ್ಲದೆ ಮಾತನಾಡುವ ಮೂಢಜನರ ಬಾಯನ್ನು ಮುಚ್ಚಿಸಬೇಕೆಂಬುದೇ ದೇವರ ಇಚ್ಛೆ.</verse>
				<verse number="16">ಸ್ವತಂತ್ರರಂತೆ ಬಾಳಿರಿ; ಆದರೆ ಕೆಟ್ಟತನವನ್ನು ಮರೆಮಾಚಲು ನಿಮ್ಮ ಸ್ವಾತಂತ್ರ್ಯವನ್ನು ದುರುಪಯೋಗಮಾಡಿಕೊಳ್ಳಬೇಡಿ; ದೇವರಿಗೆ ದಾಸರಾಗಿ ಬಾಳಿರಿ.</verse>
				<verse number="17">ಸರ್ವರನ್ನೂ ಸನ್ಮಾನಿಸಿರಿ, ಸಹೋದರರನ್ನು ಸ್ನೇಹಿಸಿರಿ, ದೇವರಲ್ಲಿ ಭಯಭಕ್ತಿ ಇಡಿ, ದೇಶಾಧಿಕಾರಿಗಳಿಗೆ ಗೌರವ ನೀಡಿ.</verse>
				<verse number="18">ಕೆಲಸಗಾರರೇ, ನಿಮ್ಮ ಮೇಲಿನ ಅಧಿಕಾರಿಗಳಿಗೆ ಅಧೀನರಾಗಿರಿ. ಅವರಿಗೆ ಪೂರ್ಣಮರ್ಯಾದೆಯನ್ನು ತೋರಿಸಿರಿ. ದಯಾವಂತರೂ ಹಿತಚಿಂತಕರೂ ಆಗಿರುವ ಅಧಿಕಾರಿಗಳಿಗೆ ಮಾತ್ರವಲ್ಲ, ಕಠಿಣವಾಗಿ ವರ್ತಿಸುವವರಿಗೂ ವಿಧೇಯರಾಗಿರಿ.</verse>
				<verse number="19">ಯಾವನಾದರೂ ಅನ್ಯಾಯವಾಗಿ ಹಿಂಸೆಬಾಧೆಗಳನ್ನು ಅನುಭವಿಸಬೇಕಾಗಿ ಬಂದಾಗ ಅದನ್ನು ದೇವರ ಹೆಸರಿನಲ್ಲಿ ಸಹಿಸಿಕೊಂಡರೆ ಅವನು ಮೆಚ್ಚುಗೆಯನ್ನು ಗಳಿಸುತ್ತಾನೆ.</verse>
				<verse number="20">ನೀವು ತಪ್ಪುಮಾಡಿ, ಶಿಕ್ಷೆಗೆ ಗುರಿಯಾದಾಗ ತಾಳ್ಮೆಯಿಂದಿದ್ದರೆ ಅದೇನೂ ದೊಡ್ಡ ಕಾರ್ಯವಲ್ಲ. ಆದರೆ ಒಳ್ಳೆಯದನ್ನು ಮಾಡಿಯೂ ಬರುವ ಹಿಂಸೆಬಾಧೆಗಳನ್ನು ತಾಳ್ಮೆಯಿಂದ ಸಹಿಸಿಕೊಂಡರೆ, ದೇವರು ನಿಮ್ಮನ್ನು ಮೆಚ್ಚುತ್ತಾರೆ.</verse>
				<verse number="21">ನೀವು ಹೀಗೆ ಜೀವಿಸಬೇಕೆಂದೇ ದೇವರು ನಿಮ್ಮನ್ನು ಕರೆದಿದ್ದಾರೆ. ಕ್ರಿಸ್ತಯೇಸು ಸಹ ನಿಮಗಾಗಿ ಹಿಂಸೆಬಾಧೆಯನ್ನು ಅನುಭವಿಸಿದರು; ತಮ್ಮ ಹೆಜ್ಜೆಯ ಜಾಡನ್ನೇ ನೀವು ಅನುಸರಿಸುವಂತೆ ನಿಮಗೊಂದು ಆದರ್ಶವನ್ನು ಬಿಟ್ಟುಹೋದರು.</verse>
				<verse number="22">ಅವರು ಯಾವ ಪಾಪವನ್ನೂ ಮಾಡಲಿಲ್ಲ. ಅವರ ಬಾಯಿಂದ ಅಬದ್ಧವಾದ ಮಾತೊಂದೂ ಕೇಳಿಬರಲಿಲ್ಲ.</verse>
				<verse number="23">ಅವರು, ಅವಮಾನಪಡಿಸಿದವರನ್ನು ಪ್ರತಿಯಾಗಿ ಅವಮಾನಪಡಿಸಲಿಲ್ಲ. ಅವರು ಯಾತನೆಯನ್ನು ಅನುಭವಿಸುವಾಗಲೂ ಯಾರಿಗೂ ಬೆದರಿಕೆ ಹಾಕಲಿಲ್ಲ. ಬದಲಿಗೆ, ಸತ್ಯಸ್ವರೂಪರೂ ನ್ಯಾಯಾಧಿಪತಿಯೂ ಆದ ದೇವರಿಗೆ ತಮ್ಮನ್ನೇ ಒಪ್ಪಿಸಿಕೊಂಡರು.</verse>
				<verse number="24">ನಾವು ಪಾಪದ ಪಾಲಿಗೆ ಸತ್ತು, ಸತ್ಯಕ್ಕೋಸ್ಕರ ಜೀವಿಸುವಂತೆ ಕ್ರಿಸ್ತಯೇಸು ತಮ್ಮ ದೇಹದಲ್ಲಿ ನಮ್ಮ ಪಾಪಗಳನ್ನು ಹೊತ್ತು ಶಿಲುಬೆಯ ಮರವನ್ನೇರಿದರು. ಅವರ ಗಾಯಗಳಿಂದ ನೀವು ಗುಣಹೊಂದಿದಿರಿ.</verse>
				<verse number="25">ನೀವು ದಾರಿತಪ್ಪಿದ ಕುರಿಗಳಂತೆ ಅಲೆಯುತ್ತಿದ್ದಿರಿ. ಈಗಲಾದರೋ ನಿಮ್ಮ ಆತ್ಮಗಳನ್ನು ಕಾಯುವ ಕುರಿಗಾಹಿಯೂ ಸಂರಕ್ಷಕನೂ ಆದಾತನ ಬಳಿಗೆ ಮರಳಿದ್ದೀರಿ.</verse>
			</chapter>
			<chapter number="3">
				<verse number="1">ಅಂತೆಯೇ ಸ್ತ್ರೀಯರೇ, ನೀವು ನಿಮ್ಮ ಪತಿಯರಿಗೆ ವಿಧೇಯರಾಗಿರಿ. ಅವರಲ್ಲಿ ಕೆಲವರು ದೇವರ ವಾಕ್ಯವನ್ನು ನಂಬದೆ ಇರಬಹುದು. ಆದರೂ ಯಾವ ಮಾತುಕತೆಯಿಲ್ಲದೆ ನಿಮ್ಮ ಸನ್ನಡತೆಯಿಂದಲೇ ಅವರನ್ನು ಜಯಿಸಬಹುದು.</verse>
				<verse number="2">ಅವರು ಗಮನಿಸುವುದು ತಮ್ಮ ಪತ್ನಿಯರ ಭಯಭಕ್ತಿಯನ್ನು, ಸುಗುಣಶೀಲತೆಯನ್ನು.</verse>
				<verse number="3">ಕೇಶವಿನ್ಯಾಸ, ಚಿನ್ನಾಭರಣದ ತೊಡುಗ಼ೆ, ನಯನವುರಾದ ಉಡುಗೆ - ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.</verse>
				<verse number="4">ಬದಲಿಗೆ, ಶಾಶ್ವತವಾದ, ಶಾಂತ ಹಾಗೂ ಸೌಮ್ಯಗುಣಗಳಿಂದ ಕೂಡಿದ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. ಇದೇ ದೇವರ ದೃಷ್ಟಿಯಲ್ಲಿ ಅತೀ ಅಮೂಲ್ಯವಾದುದು.</verse>
				<verse number="5">ಪ್ರಾಚೀನಕಾಲದ ದೈವಭಕ್ತೆಯರಾದ ಸ್ತ್ರೀಯರು ಹೀಗೆಯೇ ಸಿಂಗರಿಸಿಕೊಂಡು ತಮ್ಮ ತಮ್ಮ ಪತಿಯರಿಗೆ ವಿಧೇಯರಾಗಿದ್ದರು.</verse>
				<verse number="6">ಉದಾಹರಣೆಗೆ: ಸಾರಳು ತನ್ನ ಪತಿ ಅಬ್ರಹಾಮನಿಗೆ ವಿಧೇಯಳಾಗಿದ್ದು ಆತನನ್ನು, “ಯಜಮಾನ” ಎಂದು ಕರೆಯುತ್ತಿದ್ದಳು. ಯಾವ ಭಯಭೀತಿಯಿಲ್ಲದೆ ಸತ್ಕಾರ್ಯಗಳನ್ನು ಮಾಡುವವರಾಗಿದ್ದರೆ, ನೀವೂ ಸಾರಳ ಕುಮಾರ್ತಿಯರೇ ಹೌದು.</verse>
				<verse number="7">ಅದೇ ಪ್ರಕಾರ ಪುರುಷರೇ, ಸರಿಯಾದ ತಿಳುವಳಿಕೆಯಿಂದ ನಿಮ್ಮ ನಿಮ್ಮ ಪತ್ನಿಯರೊಡನೆ ಸಹಜೀವನ ನಡೆಸಿರಿ. ಅವರು ಅಬಲೆಯರು ಮಾತ್ರವಲ್ಲ, ಸಜ್ಜೀವ ಕೊಡುಗೆಗೆ ನಿಮ್ಮೊಂದಿಗೆ ಸಮಬಾಧ್ಯರು ಎಂದು ತಿಳಿದು ಅವರನ್ನು ಗೌರವಿಸಿರಿ. ಆಗ ನಿಮ್ಮ ಪ್ರಾರ್ಥನೆಗೆ ಅಡಚಣೆ ಉಂಟಾಗದು.</verse>
				<verse number="8">ಕಡೆಯದಾಗಿ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರಸ್ಪರ ಸಹಾನುಭೂತಿ ಇರಲಿ. ಒಡಹುಟ್ಟಿದವರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ದಯೆತೋರುವವರೂ ದೀನಭಾವವುಳ್ಳವರೂ ಆಗಿರಿ.</verse>
				<verse number="9">ಮುಯ್ಯಿಗೆ ಮುಯ್ಯಿ ತೀರಿಸಬೇಡಿರಿ; ಶಾಪಕ್ಕೆ ಪ್ರತಿಶಾಪ ಹಾಕದೆ ಆಶೀರ್ವಾದ ಮಾಡಿರಿ. ಹೀಗೆ ಮಾಡಿದರೆ ದೇವರ ಆಶೀರ್ವಾದವನ್ನು ಬಾಧ್ಯವಾಗಿ ಪಡೆಯುವಿರಿ.</verse>
				<verse number="10">“ಆನಂದಕರ ಜೀವನದ ಬಯಕೆ ಯಾರಿಗಿದೆಯೋ ಸುದಿನಗಳನು ಕಾಣುವ ಆಶೆ ಯಾರಿಗಿದೆಯೋ ಅಂಥವನು ಬಿಗಿಹಿಡಿಯಲಿ ನಾಲಿಗೆಯನು ಕೆಟ್ಟದನು ನುಡಿಯದಂತೆ ತಡೆಹಿಡಿಯಲಿ ತುಟಿಯನು ಕಪಟವನಾಡದಂತೆ.</verse>
				<verse number="11">ಕೆಡಕನ್ನು ಬಿಟ್ಟು ಒಳಿತನ್ನು ಕೈಗೊಳ್ಳಲಿ ಶಾಂತಿಯನರಸಿ ಅದರ ಸ್ಥಾಪನೆಗೆ ಶ್ರಮಿಸಲಿ.</verse>
				<verse number="12">ನೀತಿವಂತರನು ಕಾಯುವನು ಸರ್ವೇಶ್ವರನು ಅವರ ವಿಜ್ಞಾಪನೆಗೆ ಕಿವಿಗೊಡುವನು. ಕೆಡುಕರಿಗಾದರೋ ಆತನು ವಿಮುಖನು,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.</verse>
				<verse number="13">ನೀವು ಒಳ್ಳೆಯದನ್ನು ಮಾಡುವುದರಲ್ಲಿ ಆಸಕ್ತರಾಗಿದ್ದರೆ ನಿಮಗೆ ಕೇಡು ಬಗೆಯುವವರು ಯಾರು?</verse>
				<verse number="14">ನ್ಯಾಯನೀತಿಯ ನಿಮಿತ್ತ ಹಿಂಸೆಯನ್ನು ಅನುಭವಿಸಬೇಕಾಗಿ ಬಂದರೂ ನೀವು ಭಾಗ್ಯವಂತರು. ಮಾನವರ ಬೆದರಿಕೆಗೆ ಹೆದರಬೇಡಿ, ಕಳವಳ ಪಡಬೇಡಿ.</verse>
				<verse number="15">ಕ್ರಿಸ್ತಯೇಸುವನ್ನು ಪ್ರಭುವೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಾಪಿಸಿರಿ. ನಿಮ್ಮಲ್ಲಿರುವ ನಂಬಿಕೆ ನಿರೀಕ್ಷೆಯ ಬಗ್ಗೆ ಯಾರಾದರೂ ಪ್ರಶ್ನಿಸಿದರೆ ಅವರಿಗೆ ತಕ್ಕ ಉತ್ತರ ಕೊಡಲು ಸರ್ವದಾ ಸಿದ್ಧರಾಗಿರಿ.</verse>
				<verse number="16">ಹಾಗೆ ಉತ್ತರ ಕೊಡುವಾಗ ಮರ್ಯಾದೆಯಿಂದಲೂ ಶಾಂತಿಸಮಾಧಾನದಿಂದಲೂ ಮಾತನಾಡಿ. ನಿಮ್ಮ ಮನಸ್ಸಾಕ್ಷಿ ಶುದ್ಧವಾಗಿರಲಿ. ಆಗ ಉತ್ತಮವಾದ ನಿಮ್ಮ ಕ್ರಿಸ್ತೀಯ ವರ್ತನೆಯನ್ನು ಕಂಡು ದೂಷಿಸಿದವರು, ನಿಮ್ಮನ್ನು ನಿಂದಿಸಿದ್ದಕ್ಕಾಗಿ ತಾವೇ ನಾಚಿಕೆಪಡುವರು.</verse>
				<verse number="17">ಕೆಟ್ಟದ್ದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದಕ್ಕಿಂತ ದೇವರ ಚಿತ್ತವಾದರೆ, ಒಳ್ಳೆಯದನ್ನು ಮಾಡಿ ಶಿಕ್ಷೆಯನ್ನು ಅನುಭವಿಸುವುದೇ ಲೇಸು.</verse>
				<verse number="18">ಅಂತೆಯೇ ಕ್ರಿಸ್ತಯೇಸು ನೀತಿವಂತರಾಗಿದ್ದರೂ ಅನೀತಿವಂತರಿಗಾಗಿ ಪ್ರಾಣತ್ಯಾಗಮಾಡಿದರು. ಪಾಪ ನಿವಾರಣಾರ್ಥವಾಗಿ ಒಂದೇ ಸಾರಿಗೆ ಮಾತ್ರವಲ್ಲ, ಎಂದೆಂದಿಗೂ ನಮ್ಮನ್ನು ದೇವರ ಬಳಿಗೆ ಸೇರಿಸಲು ಸತ್ತರು. ದೇಹದಲ್ಲಿ ಅವರು ವಧಿತರಾದರೂ ಆತ್ಮದಲ್ಲಿ ಜೀವಂತರಾದರು.</verse>
				<verse number="19">ಆಧ್ಯಾತ್ಮಿಕವಾಗಿಯೇ ತೆರಳಿ ಸೆರೆಯಲ್ಲಿದ್ದ ಆತ್ಮಗಳಿಗೆ ಶುಭಸಂದೇಶವನ್ನು ಬೋಧಿಸಿದರು.</verse>
				<verse number="20">ಪೂರ್ವಕಾಲದಲ್ಲಿ ನೋವನು ನಾವೆಯನ್ನು ಕಟ್ಟುತ್ತಿದ್ದಾಗ ತಾಳ್ಮೆಯಿಂದಿದ್ದ ದೇವರಿಗೆ ಅವಿಧೇಯರಾಗಿದ್ದ ಆತ್ಮಗಳೇ ಅವು. ನಾವೆಯೊಳಗಿದ್ದು ಕೆಲವರು, ಅಂದರೆ ಎಂಟು ಜನರು, ಜಲದಿಂದ ರಕ್ಷಣೆಹೊಂದಿದರು.</verse>
				<verse number="21">ಇದು ದೀಕ್ಷಾಸ್ನಾನವನ್ನು ಸೂಚಿಸುವ ಒಂದು ಸಂಕೇತ. ಈ ದೀಕ್ಷಾಸ್ನಾನ ಯೇಸುಕ್ರಿಸ್ತರ ಪುನರುತ್ಥಾನದ ಮೂಲಕ ನಿಮಗೆ ಜೀವೋದ್ಧಾರವನ್ನು ನೀಡುತ್ತದೆ. ಇದು ಕೇವಲ ದೇಹದ ಮಾಲಿನ್ಯವನ್ನು ಹೋಗಲಾಡಿಸುವಂಥಾದ್ದಲ್ಲ; ಶುದ್ಧಮನಸ್ಸಿನಿಂದ ದೇವರಿಗೆ ಮಾಡುವ ಪ್ರಮಾಣ ವಚನವಾಗಿದೆ.</verse>
				<verse number="22">ಯೇಸುಕ್ರಿಸ್ತರು ಸ್ವರ್ಗಕ್ಕೆ ಏರಿ, ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿದ್ದಾರೆ; ದೂತಗಣಗಳ ಮೇಲೂ ಸ್ವರ್ಗೀಯ ಶಕ್ತರ ಹಾಗೂ ಅಧಿಕಾರಿಗಳ ಮೇಲೂ ಆಳ್ವಿಕೆ ನಡೆಸುತ್ತಿದ್ದಾರೆ.</verse>
			</chapter>
			<chapter number="4">
				<verse number="1">ಕ್ರಿಸ್ತಯೇಸು ದೈಹಿಕವಾಗಿ ಹಿಂಸೆಬಾಧೆಯನ್ನು ಅನುಭವಿಸಿದ್ದರಿಂದ ನೀವೂ ಅವರಲ್ಲಿದ್ದ ಅದೇ ಭಾವನೆಯಿಂದ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ದೈಹಿಕವಾಗಿ ಹಿಂಸೆಪಡುವವನು ಪಾಪ ಜೀವನದೊಡನೆ ಸಂಬಂಧವನ್ನು ಕಡಿದುಕೊಂಡವನು.</verse>
				<verse number="2">ಉಳಿದಿರುವ ತನ್ನ ಜೀವಮಾನ ಕಾಲವನ್ನು ಲೌಕಿಕ ವ್ಯಾಮೋಹಗಳಲ್ಲಿ ಕಳೆಯದೆ ದೇವರ ಚಿತ್ತಕ್ಕನುಸಾರ ಕಳೆಯುತ್ತಾನೆ.</verse>
				<verse number="3">ಕ್ರೈಸ್ತರಲ್ಲದವರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಮಾಡಿದ್ದು ಸಾಕು. ಆಗ ನೀವು ಅಶ್ಲೀಲತೆ, ಕಾಮ, ಕುಡುಕುತನ, ಅಮಲೇರುವಿಕೆ, ದುಂದೌತಣ ಮತ್ತು ಯೋಗ್ಯವಲ್ಲದ ವಿಗ್ರಹಾರಾಧನೆ - ಈ ಮುಂತಾದವುಗಳಿಗೆ ಒಳಗಾಗಿದ್ದಿರಿ.</verse>
				<verse number="4">ಈಗಲಾದರೋ ನೀವು ಮುಂಚಿನಂತೆ ಲಂಪಟ ಜೀವನದಲ್ಲಿ ಅವರೊಡನೆ ಬೆರೆಯದಿರುವುದನ್ನು ಕಂಡು ಸುಖೇದಾಶ್ಚರ್ಯದಿಂದ ನಿಮ್ಮನ್ನು ದೂಷಿಸುತ್ತಾರೆ.</verse>
				<verse number="5">ಜೀವಂತರಿಗೂ ಮೃತರಿಗೂ ನ್ಯಾಯತೀರಿಸಲು ಸಿದ್ಧವಾಗಿರುವ ದೇವರಿಗೆ ಅವರು ಲೆಕ್ಕಕೊಡಬೇಕಾಗುವುದು.</verse>
				<verse number="6">ಮೃತರಿಗೂ ಶುಭಸಂದೇಶವನ್ನು ಬೋಧಿಸಲಾಯಿತು. ಏಕೆಂದರೆ, ದೇಹದ ಮಟ್ಟಿಗೆ ಸಕಲ ಮಾನವರಂತೆ ಮರಣವೆಂಬ ತೀರ್ಪನ್ನು ಹೊಂದಿದ್ದರೂ ದೇವರ ಆತ್ಮದ ಮಟ್ಟಿಗೆ ದೇವರಂತೆಯೇ ಜೀವಿಸಲೆಂದು ಆ ಸಂದೇಶವನ್ನು ಬೋಧಿಸಲಾಯಿತು.</verse>
				<verse number="7">ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.</verse>
				<verse number="8">ಎಲ್ಲಕ್ಕೂ ಮಿಗಿಲಾಗಿ ಒಬ್ಬರನ್ನೊಬ್ಬರು ಯಥಾರ್ಥವಾಗಿ ಪ್ರೀತಿಸಿರಿ. ಏಕೆಂದರೆ, ಪ್ರೀತಿ ಅಸಂಖ್ಯಾತ ಪಾಪಗಳನ್ನು ಅಳಿಸಿಹಾಕುತ್ತದೆ.</verse>
				<verse number="9">ಗೊಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿಸತ್ಕಾರ ಮಾಡಿ.</verse>
				<verse number="10">ದೇವರ ವಿವಿಧ ವರಗಳ ವಿಷಯದಲ್ಲಿ ಉತ್ತಮ ನಿರ್ವಾಹಕನಂತೆ ಪ್ರತಿಯೊಬ್ಬನೂ ದೇವರು ತನಗೆ ಕೊಟ್ಟಿರುವ ವಿಶೇಷ ವರದಾನಗಳನ್ನು ಇತರರ ಒಳಿತಿಗಾಗಿ ಬಳಸಲಿ.</verse>
				<verse number="11">ಬೋಧಿಸುವ ವರವನ್ನು ಪಡೆದವನು ದೇವರ ವಾಕ್ಯವನ್ನು ಬೋಧಿಸುವವನಂತೆ ಬೋಧನೆಮಾಡಲಿ. ಸೇವೆಮಾಡುವ ವರವನ್ನು ಪಡೆದವನು, ದೇವರಿಂದ ಶಕ್ತಿಯನ್ನು ಪಡೆದವನಂತೆ ಸೇವೆಮಾಡಲಿ. ಇದರಿಂದ ಯೇಸುಕ್ರಿಸ್ತರ ಮುಖಾಂತರ ಎಲ್ಲದರಲ್ಲಿಯೂ ದೇವರಿಗೆ ಸ್ತುತಿಯುಂಟಾಗುವುದು. ಅವರಿಗೆ ಸದಾಕಾಲ ಮಹಿಮೆಯೂ ಸರ್ವಾಧಿಕಾರವೂ ಸಲ್ಲಲಿ. ಆಮೆನ್.</verse>
				<verse number="12">ಪ್ರಿಯರೇ, ಪರಿಶೋಧನೆಗೆಂದು ನಿಮಗೆ ಬಂದೊದಗಿರುವ ಅಗ್ನಿಪರೀಕ್ಷೆಗಾಗಿ ಆಶ್ಚರ್ಯಪಡಬೇಡಿ. ಅನಿರೀಕ್ಷಿತವಾಗಿ ಏನೋ ಸಂಭವಿಸಿಬಿಟ್ಟಿತೆಂದು ವಿಸ್ಮಯಪಡಬೇಡಿ.</verse>
				<verse number="13">ಬದಲಿಗೆ, ಯೇಸುಕ್ರಿಸ್ತರ ಬಾಧೆಗಳಲ್ಲಿ ಪಾಲುಹೊಂದಿರುತ್ತೀರೆಂದು ಸಂತೋಷಪಡಿ; ಅವರ ಮಹಿಮೆಯು ಪ್ರತ್ಯಕ್ಷವಾಗುವಾಗ ಪೂರ್ಣ ಹರ್ಷಾನಂದವನ್ನು ಪಡೆಯುವಿರಿ.</verse>
				<verse number="14">ಕ್ರಿಸ್ತಯೇಸುವಿನ ನಾಮದ ನಿಮಿತ್ತ ನಿಂದೆ ಅವಮಾನಗಳಿಗೆ ಗುರಿಯಾದರೆ ನೀವು ಧನ್ಯರು! ಮಹಿಮಾನ್ವಿತ ದೇವರ ಆತ್ಮವು ನಿಮ್ಮಲ್ಲಿ ನೆಲಸಿರುವುದು.</verse>
				<verse number="15">ನಿಮ್ಮಲ್ಲಿ ಯಾರೂ ಕೊಲೆಗಾರ, ಕಳ್ಳ, ಕೆಡುಕ, ಕುಚೋದ್ಯಗಾರ, ಎಂಬ ಕಾರಣದಿಂದ ಹಿಂಸೆಬಾಧೆಗಳಿಗೆ ಗುರಿಯಾಗಬಾರದು.</verse>
				<verse number="16">ಅದಕ್ಕೆ ಪ್ರತಿಯಾಗಿ, ಒಬ್ಬನು ಕ್ರೈಸ್ತವಿಶ್ವಾಸಿ ಎಂಬ ಕಾರಣದಿಂದ ಹಿಂಸೆಯನ್ನು ಅನುಭವಿಸಿದರೆ ಅಂಥವನು ನಾಚಿಕೆಪಡಬೇಕಾಗಿಲ್ಲ; ಕ್ರೈಸ್ತವಿಶ್ವಾಸಿ ಎಂಬ ಆ ಹೆಸರನ್ನು ಪಡೆದುದಕ್ಕಾಗಿ ದೇವರಿಗೆ ಕೃತಜ್ಞತೆ ಸಲ್ಲಿಸಲಿ.</verse>
				<verse number="17">ನ್ಯಾಯತೀರ್ಪಿನ ಕಾಲವು ಬಂದಿದೆ. ಮೊತ್ತಮೊದಲು ದೇವರ ಸ್ವಂತಜನರೇ ಆ ತೀರ್ಪಿಗೆ ಗುರಿಯಾಗುವರು. ದೇವಜನರಾದ ನಾವೇ ಅದಕ್ಕೆ ಮೊದಲು ಒಳಗಾಗುವುದಾದರೆ ದೇವರ ಶುಭಸಂದೇಶದಲ್ಲಿ ವಿಶ್ವಾಸವಿಡದವರ ಗತಿಯಾದರೂ ಏನು?</verse>
				<verse number="18">“ಸಜ್ಜನರೇ ಸದ್ಗತಿಯನ್ನು ಹೊಂದುವುದು ಕಷ್ಟವಾಗುವುದಾದರೆ ಇನ್ನು ಭಕ್ತಿಹೀನರೂ ಪಾಪಿಗಳೂ ಆದವರ ಪಾಡೇನು?” ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ.</verse>
				<verse number="19">ಆದ್ದರಿಂದ, ದೇವರ ಚಿತ್ತಾನುಸಾರ ಹಿಂಸೆಬಾಧೆಯನ್ನು ಅನುಭವಿಸುವವರು ತಮ್ಮ ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಸೃಷ್ಟಿಕರ್ತನಿಗೆ ಶರಣಾಗಲಿ. ಆತ ಅವರನ್ನೆಂದಿಗೂ ಕೈಬಿಡನು.</verse>
			</chapter>
			<chapter number="5">
				<verse number="1">ಕ್ರಿಸ್ತಯೇಸುವಿನ ಮರಣ -ಯಾತನೆಯನ್ನು ಕಣ್ಣಾರೆ ಕಂಡವನೂ ಮುಂದೆ ಪ್ರತ್ಯಕ್ಷವಾಗುವ ಮಹಿಮೆಯಲ್ಲಿ ಭಾಗಿಯಾಗಲಿರುವವನೂ ಸಭಾಪ್ರಮುಖನೂ ಆದ ನಾನು, ನಿಮ್ಮಲ್ಲಿ ಪ್ರಮುಖರಾದ ಇತರರನ್ನು ಪ್ರೋತ್ಸಾಹಿಸಿ ವಿನಂತಿಸುವುದೇನೆಂದರೆ:</verse>
				<verse number="2">ನನ್ನ ಜೊತೆಹಿರಿಯರೇ, ದೇವರು ನಿಮಗೆ ವಹಿಸಿಕೊಟ್ಟಿರುವ ಮಂದೆಯನ್ನು ಕಾಯಿರಿ. ಕಡ್ಡಾಯದಿಂದಲ್ಲ, ದೇವರ ಚಿತ್ತಾನುಸಾರ ಅಕ್ಕರೆಯಿಂದ ಕಾಯಿರಿ. ದ್ರವ್ಯದ ದುರಾಶೆಯಿಂದಲ್ಲ, ಸೇವಾಸಕ್ತಿಯಿಂದ ಕಾಯಿರಿ.</verse>
				<verse number="3">ನಿಮ್ಮ ಪಾಲನೆಗೆ ಒಳಗಾಗಿರುವವರ ಮೇಲೆ ದರ್ಪದಿಂದ ದೊರೆತನಮಾಡದೆ ದೇವರ ಮಂದೆಗೆ ಆದರ್ಶ ಮಾದರಿಗಳಾಗಿರಿ.</verse>
				<verse number="4">ಆಗ ಮಾತ್ರ, ಪ್ರಧಾನ ಕುರಿಗಾಹಿ ಪ್ರತ್ಯಕ್ಷನಾಗುವಾಗ ಮಲಿನವಾಗದ ಮಹಿಮಾನ್ವಿತ ಜಯಮಾಲೆಯನ್ನು ಪಡೆಯುವಿರಿ.</verse>
				<verse number="5">ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.</verse>
				<verse number="6">ದೇವರ ಪರಾಕ್ರಮಕ್ಕೆ ತಗ್ಗಿ ನಮ್ರರಾಗಿ ನಡೆದುಕೊಳ್ಳಿ. ಆಗ ಅವರು ನಿಮ್ಮನ್ನು ಸಕಾಲದಲ್ಲಿ ಮೇಲಕ್ಕೆತ್ತುವರು;</verse>
				<verse number="7">ನಿಮ್ಮ ಚಿಂತೆಯನ್ನೆಲ್ಲಾ ಅವರಿಗೇ ಬಿಟ್ಟುಬಿಡಿ. ನಿಮ್ಮ ಮೇಲೆ ಅವರಿಗೆ ಲಕ್ಷ್ಯವಿದೆ.</verse>
				<verse number="8">ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.</verse>
				<verse number="9">ವಿಶ್ವಾಸದಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ. ನಿಮ್ಮ ಸಹ ವಿಶ್ವಾಸಿಗಳು ಜಗತ್ತಿನಲ್ಲೆಲ್ಲಾ ಇಂಥ ಹಿಂಸೆಬಾಧೆಗಳನ್ನೇ ಅನುಭವಿಸುತ್ತಿದ್ದಾರೆಂದು ನಿಮಗೆ ತಿಳಿದಿದೆ.</verse>
				<verse number="10">ಯೇಸುಕ್ರಿಸ್ತರಲ್ಲಿ ನಿಮ್ಮನ್ನು ತಮ್ಮ ಶಾಶ್ವತ ಮಹಿಮೆಗೆ ಕರೆದ ಕೃಪಾನಿಧಿಯಾದ ದೇವರು ನೀವು ಸ್ವಲ್ಪಕಾಲ ಹಿಂಸೆಬಾಧೆಯನ್ನು ಅನುಭವಿಸಿದ ನಂತರ ನಿಮ್ಮನ್ನು ಪೂರ್ವಸ್ಥಿತಿಗೆ ತರುವರು; ನಿಮ್ಮನ್ನು ಸ್ಥಿರಗೊಳಿಸಿ ಬಲಪಡಿಸುವರು.</verse>
				<verse number="11">ಅವರ ಆಳ್ವಿಕೆ ಯುಗಯುಗಾಂತರಕ್ಕೂ ಇರಲಿ. ಆಮೆನ್.</verse>
				<verse number="12">ನನ್ನ ಈ ಪುಟ್ಟ ಪತ್ರವನ್ನು ನಂಬಿಕಸ್ಥ ಸಹೋದರನಾದ ಸಿಲ್ವಾನನ ಸಹಾಯದಿಂದ ನಿಮಗೆ ಬರೆದಿರುತ್ತೇನೆ. ನಿಮ್ಮನ್ನು ಪ್ರೋತ್ಸಾಹಿಸಲೆಂದು ಮತ್ತು ಇದುವೇ ದೇವರ ನಿಜವಾದ ಅನುಗ್ರಹವೆಂದು ಸ್ಪಷ್ಟೀಕರಿಸಲು ಬರೆದಿದ್ದೇನೆ. ಈ ಅನುಗ್ರಹದಲ್ಲಿ ನೀವು ದೃಢವಾಗಿ ನಿಲ್ಲಿರಿ.</verse>
				<verse number="13">ನಿಮ್ಮ ಹಾಗೆ ದೇವರಿಂದ ಆಯ್ಕೆಯಾದ ಬಾಬಿಲೋನಿನಲ್ಲಿರುವ ಸಭೆ ನಿಮಗೆ ವಂದನೆಗಳನ್ನು ತಿಳಿಸುತ್ತದೆ. ಅಂತೆಯೇ, ನನ್ನ ಮಗನಂತಿರುವ ಮಾರ್ಕನು ನಿಮ್ಮನ್ನು ವಂದಿಸಿದ್ದಾನೆ.</verse>
				<verse number="14">ಪ್ರೀತಿಯ ಮುದ್ದನ್ನಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಯೇಸುಕ್ರಿಸ್ತರಲ್ಲಿರುವ ನಿಮ್ಮೆಲ್ಲರಿಗೂ ಶಾಂತಿಸಮಾಧಾನ ಲಭಿಸಲಿ!</verse>
			</chapter>
		</book>
		<book number="61">
			<chapter number="1">
				<verse number="1">ನಮ್ಮ ದೇವರ ಮತ್ತು ಉದ್ಧಾರಕ ಯೇಸುಕ್ರಿಸ್ತರ ಸತ್ಸಂಬಂಧದ ಮೂಲಕ ನಮ್ಮಂತೆಯೇ ಅಮೂಲ್ಯವಾದ ವಿಶ್ವಾಸವನ್ನು ಹೊಂದಿರುವ ಭಕ್ತಾದಿಗಳಿಗೆ - ಯೇಸುಕ್ರಿಸ್ತರ ದಾಸನೂ ಪ್ರೇಷಿತನೂ ಆದ ಸಿಮೋನ ಪೇತ್ರನು ಬರೆಯುವ ಪತ್ರ:</verse>
				<verse number="2">ದೇವರ ಮತ್ತು ಪ್ರಭು ಯೇಸುಕ್ರಿಸ್ತರ ಬಗ್ಗೆ ನೀವು ಪಡೆಯುತ್ತಿರುವ ಜ್ಞಾನಾರ್ಜನೆಯು ನಿಮಗೆ ಕೃಪಾಶೀರ್ವಾದವನ್ನೂ ಶಾಂತಿಸಮಾಧಾನವನ್ನೂ ಅಧಿಕಾಧಿಕವಾಗಿ ತರಲಿ!</verse>
				<verse number="3">ತಮ್ಮ ಸ್ವಂತ ಮಹಿಮೆಯಲ್ಲೂ ಸೌಭಾಗ್ಯದಲ್ಲೂ ಭಾಗಿಗಳಾಗಲು ದೇವರು ನಮ್ಮನ್ನು ಕರೆದಿದ್ದಾರೆ. ಅವರನ್ನು ಅರಿತುಕೊಳ್ಳುವುದರ ಮೂಲಕ ನಾವು ಭಕ್ತಿಯುತ ಜೀವನವನ್ನು ನಡೆಸಲು ಬೇಕಾದುದೆಲ್ಲವನ್ನೂ ಆ ಯೇಸುವಿನ ದಿವ್ಯಶಕ್ತಿಯಿಂದ ಪಡೆದಿದ್ದೇವೆ.</verse>
				<verse number="4">ಹೀಗೆ ನೀವು ಲೋಕದಲ್ಲಿ ಆಶಾಪಾಶಗಳಿಂದ ಉಂಟಾಗುವ ಭ್ರಷ್ಟಾಚಾರದಿಂದ ತಪ್ಪಿಸಿಕೊಂಡು ದೈವಿಕಸ್ವಭಾವದಲ್ಲಿ ಪಾಲುಗಾರರಾಗುವಂತೆ, ದೇವರು ಅಮೂಲ್ಯವೂ ಅತ್ಯುತ್ತಮವೂ ಆದ ವಾಗ್ದಾನಗಳನ್ನು ಅನುಗ್ರಹಿಸಿದ್ದಾರೆ.</verse>
				<verse number="5">ಈ ಕಾರಣ, ನೀವು ಪೂರ್ಣಾಸಕ್ತಿಯಿಂದ ನಿಮ್ಮ ವಿಶ್ವಾಸಕ್ಕೆ ಸದ್ಗುಣವನ್ನು, ಸದ್ಗುಣಕ್ಕೆ ಸುಜ್ಞಾನವನ್ನು ಸೇರಿಸಿರಿ.</verse>
				<verse number="6">ಸುಜ್ಞಾನಕ್ಕೆ ಸಂಯಮವನ್ನು, ಸಂಯಮಕ್ಕೆ ಸ್ಥೈರ್ಯವನ್ನು, ಸ್ಥೈರ್ಯಕ್ಕೆ ಸದ್ಭಕ್ತಿಯನ್ನು ಕೂಡಿಸಿರಿ.</verse>
				<verse number="7">ಈ ನಿಮ್ಮ ಸದ್ಭಕ್ತಿಗೆ ಸೋದರ ಸ್ನೇಹವನ್ನು, ಸೋದರ ಸ್ನೇಹಕ್ಕೆ ಪ್ರೀತಿಯನ್ನು ಬೆರೆಸಿರಿ.</verse>
				<verse number="8">ಈ ಗುಣಗಳು ನಿಮ್ಮಲ್ಲಿ ಬೆಳೆದು ಸಮೃದ್ಧವಾಗಿದ್ದರೆ, ನಮ್ಮ ಪ್ರಭು ಯೇಸುಕ್ರಿಸ್ತರನ್ನು ಅರಿತು ಬಾಳುವುದರಲ್ಲಿ ಇವು ನಿಮ್ಮನ್ನು ಚೈತನ್ಯಪೂರ್ಣರನ್ನಾಗಿಯೂ ಫಲಪ್ರದರನ್ನಾಗಿಯೂ ಮಾಡುತ್ತವೆ.</verse>
				<verse number="9">ಈ ಗುಣಗಳಿಲ್ಲದವನು ಸಂಕುಚಿತ ಮನೋಭಾವನೆಯುಳ್ಳವನು ಹಾಗೂ ಅಂಧನು. ಹಿಂದಿನ ಪಾಪಗಳಿಂದ ತಾನು ಶುದ್ಧಗೊಂಡವನು ಎಂಬುದನ್ನು ಮರೆತುಬಿಟ್ಟವನು.</verse>
				<verse number="10">ಸಹೋದರರೇ, ನೀವು ದೇವರಿಂದ ಕರೆಹೊಂದಿದವರು; ದೇವರಿಂದ ಆಯ್ಕೆಯಾದವರು. ಈ ವರದಲ್ಲಿ ದೃಢವಾಗಿರಲು ಮತ್ತಷ್ಟು ಪ್ರಯತ್ನಿಸಿರಿ. ಹೀಗೆ ಮಾಡಿದರೆ, ನೀವೆಂದಿಗೂ ವಿಶ್ವಾಸಭ್ರಷ್ಟರಾಗಲಾರಿರಿ.</verse>
				<verse number="11">ನಮ್ಮ ಪ್ರಭು ಹಾಗೂ ಉದ್ಧಾರಕ ಯೇಸುಕ್ರಿಸ್ತರ ಅಮರ ರಾಜ್ಯವನ್ನು ಪ್ರವೇಶಿಸುವ ಭಾಗ್ಯವನ್ನು ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವರು.</verse>
				<verse number="12">ಈ ವಿಷಯಗಳೆಲ್ಲಾ ನಿಮಗೆ ತಿಳಿದೇ ಇವೆ; ನೀವು ಅಂಗೀಕರಿಸಿದ ಸತ್ಯದಲ್ಲಿ ಸ್ಥಿರವಾಗಿಯೂ ಇದ್ದೀರಿ. ಆದರೂ ಇವುಗಳನ್ನು ಪದೇ ಪದೇ ನಿಮ್ಮ ಜ್ಞಾಪಕಕ್ಕೆ ತರಲು ಅಪೇಕ್ಷಿಸುತ್ತೇನೆ.</verse>
				<verse number="13">ನಾನು ಈ ದೇಹವೆಂಬ ಗುಡಾರದಲ್ಲಿ ಜೀವಿಸಿರುವ ತನಕ ನಿಮ್ಮನ್ನು ಜ್ಞಾಪಕಪಡಿಸಿ, ಪ್ರೋತ್ಸಾಹಿಸುವುದು ಉಚಿತವೆಂದು ಎಣಿಸಿದ್ದೇನೆ.</verse>
				<verse number="14">ನಾನು ಈ ಗುಡಾರವನ್ನು ತ್ಯಜಿಸುವ ಕಾಲವು ಸಮೀಪಿಸಿತೆಂದು ಬಲ್ಲೆ. ನಮ್ಮ ಪ್ರಭು ಯೇಸುಕ್ರಿಸ್ತರೇ ನನಗಿದನ್ನು ಸ್ಪಷ್ಟಪಡಿಸಿದ್ದಾರೆ.</verse>
				<verse number="15">ನನ್ನ ಮರಣಾ ನಂತರವೂ ಈ ವಿಷಯಗಳನ್ನು ನೀವು ಯಾವಾಗಲೂ ಜ್ಞಾಪಕಕ್ಕೆ ತಂದುಕೊಳ್ಳಲು ಸಾಧ್ಯವಾಗುವಂತೆ ಈಗಲೇ ನನ್ನಿಂದಾದಷ್ಟು ಪ್ರಯತ್ನಿಸುತ್ತೇನೆ.</verse>
				<verse number="16">ನಮ್ಮ ಪ್ರಭು ಯೇಸುಕ್ರಿಸ್ತರ ಶಕ್ತಿಸಾಮರ್ಥ್ಯವನ್ನು ಮತ್ತು ಅವರ ಪುನರಾಗಮನವನ್ನು ನಿಮಗೆ ತಿಳಿಯಪಡಿಸುವಾಗ ಚಮತ್ಕಾರದಿಂದ ಕಲ್ಪಿಸಿದ ಕಟ್ಟುಕತೆಗಳನ್ನು ಆಧರಿಸಿ ನಾವು ಮಾತನಾಡಲಿಲ್ಲ. ನಾವೇ ಅವರ ಮಹತ್ತನ್ನು ಕಣ್ಣಾರೆಕಂಡು ಅದನ್ನು ತಿಳಿಯಪಡಿಸಿದ್ದೇವೆ.</verse>
				<verse number="17">ತಂದೆಯಾದ ದೇವರಿಂದ ಅವರು ಗೌರವವನ್ನೂ ಮಹಿಮೆಯನ್ನೂ ಪಡೆದಾಗ, “ಈತನು ನನ್ನ ಪುತ್ರ, ನನಗೆ ಪ್ರಿಯನಾದವನು; ನನ್ನ ಅಪಾರ ಮೆಚ್ಚುಗೆಗೆ ಪಾತ್ರನು,” ಎಂದು ಅವರನ್ನು ಕುರಿತೇ ವಾಣಿಯೊಂದು ಮಹೋನ್ನತ ವೈಭವದಿಂದ ಕೇಳಿಬಂದಿತು.</verse>
				<verse number="18">ಆಗ ನಾವು ಆ ಪುನೀತ ಪರ್ವತದ ಮೇಲೆ ಅವರೊಡನೆ ಇದ್ದೆವು. ಸ್ವರ್ಗದಿಂದ ಆ ವಾಣಿಯನ್ನು ನಾವು ಕೇಳಿದೆವು.</verse>
				<verse number="19">ಆದ್ದರಿಂದ ಪ್ರವಾದನೆಯ ಸಂದೇಶವು ನಮಗೆ ಮತ್ತಷ್ಟು ಖಚಿತವಾಗಿ ಗೊತ್ತಾಗಿದೆ. ಇದನ್ನು ನೀವು ಕತ್ತಲಲ್ಲಿ ಬೆಳಗುವ ದೀಪವೆಂದು ಪರಿಗಣಿಸಿ ಲಕ್ಷ್ಯಕೊಟ್ಟರೆ ಒಳ್ಳೆಯದು. ನಿಮ್ಮ ಹೃದಯದಲ್ಲಿ ಬೆಳಕು ಹರಿದು ಅರುಣೋದಯದ ನಕ್ಷತ್ರವು ಮೂಡುವವರೆಗೂ ಈ ದೀಪವು ಬೆಳಗುತ್ತಿರುತ್ತದೆ.</verse>
				<verse number="20">ಆದರೆ, ಇದನ್ನು ನೀವು ಮುಖ್ಯವಾಗಿ ಜ್ಞಾಪಕದಲ್ಲಿಡಬೇಕು: ಪವಿತ್ರಗ್ರಂಥದಲ್ಲಿರುವ ಯಾವ ಪ್ರವಾದನೆಯೂ ವೈಯಕ್ತಿಕ ವ್ಯಾಖ್ಯಾನದ ವಿಷಯವಲ್ಲ.</verse>
				<verse number="21">ಏಕೆಂದರೆ, ಅದರ ಯಾವ ಪ್ರವಾದನೆಯೂ ಎಂದೂ ಮಾನವ ಸಂಕಲ್ಪದಿಂದ ಬಂದುದಲ್ಲ;</verse>
				<verse number="22">ಆ ಮನುಷ್ಯರು ಪವಿತ್ರಾತ್ಮರಿಂದ ಪ್ರೇರಿತರಾಗಿ ದೇವರಿಂದ ಪಡೆದ ವಾಕ್ಯವನ್ನೇ ಮಾತನಾಡಿದರು.</verse>
			</chapter>
			<chapter number="2">
				<verse number="1">ಇಸ್ರಯೇಲ್ ಜನರಲ್ಲೇ ಕಪಟ ಪ್ರವಾದಿಗಳು ಕಾಣಿಸಿಕೊಂಡರು. ಅಂತೆಯೇ, ನಿಮ್ಮಲ್ಲೂ ಸುಳ್ಳುಬೋಧಕರು ಕಾಣಿಸಿಕೊಳ್ಳುವರು. ಹಾನಿಕರವಾದ ದುರ್ಬೋಧನೆಗಳನ್ನು ಗೋಪ್ಯವಾಗಿ ಪ್ರಸರಿಸುವರು. ಒತ್ತೆಯಿಟ್ಟು ತಮ್ಮನ್ನು ರಕ್ಷಿಸಿದ ಒಡೆಯನನ್ನೇ ಅರಿಯೆವೆಂದು ನಿರಾಕರಿಸುವರು. ಹೀಗೆ ತಮ್ಮ ವಿನಾಶವನ್ನು ತಾವೇ ಬೇಗನೆ ಬರಮಾಡಿಕೊಳ್ಳುವರು.</verse>
				<verse number="2">ಇಷ್ಟಾದರೂ ಅವರ ಅನೈತಿಕಮಾರ್ಗವನ್ನೇ ಅನೇಕರು ಅನುಸರಿಸುವರು. ಅವರ ದೆಸೆಯಿಂದ ಇತರರು ಸತ್ಯಮಾರ್ಗವನ್ನು ಅವಹೇಳನ ಮಾಡುವರು.</verse>
				<verse number="3">ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.</verse>
				<verse number="4">ಪಾಪಮಾಡಿದ ದೇವದೂತರನ್ನೂ ದೇವರು ದಂಡಿಸದೆ ಬಿಡಲಿಲ್ಲ. ಅವರನ್ನು ನರಕಕ್ಕೆ ದಬ್ಬಿದರು. ಅಂತಿಮ ತೀರ್ಪಿನ ದಿನವನ್ನು ಎದುರುನೋಡುತ್ತಾ ಕಾದಿರುವಂತೆ, ಕಾರಿರುಳ ಕೂಪದಲ್ಲಿ ಕೂಡಿಹಾಕಿದರು.</verse>
				<verse number="5">ಪುರಾತನ ಕಾಲದ ಜನರನ್ನೂ ಸಹ ದೇವರು ದಂಡಿಸದೆ ಬಿಡಲಿಲ್ಲ. ನೀತಿಮಾರ್ಗವನ್ನು ಸಾರಿದ ನೋವನನ್ನು ಮತ್ತು ಅವನೊಂದಿಗಿದ್ದ ಇತರ ಏಳು ಜನರನ್ನು ಮಾತ್ರ ಕಾಪಾಡಿ, ದುರ್ಜನರಿಂದ ಕೂಡಿದ್ದ ಜಗತ್ತಿನ ಮೇಲೆ ಜಲಪ್ರಳಯವನ್ನು ಬರಮಾಡಿದರು.</verse>
				<verse number="6">ಸೊದೋಮ್ ಮತ್ತು ಗೊಮೋರ ಪಟ್ಟಣಗಳನ್ನು ಕೂಡ ದೇವರು ಬಿಡಲಿಲ್ಲ. ದುರ್ಜನರಿಗೆ ಬರಲಿರುವ ದುರ್ಗತಿ ಏನೆಂದು ಸೂಚಿಸುವುದಕ್ಕಾಗಿ ಆ ಪಟ್ಟಣಗಳನ್ನು ಸುಟ್ಟು ಭಸ್ಮಮಾಡಿದರು.</verse>
				<verse number="7">ಆದರೆ, ಆ ದುರ್ಜನರ ಅನೈತಿಕ ನಡವಳಿಕೆಯನ್ನು ಕಂಡು ಅತಿಯಾಗಿ ಮನನೊಂದಿದ್ದ ಲೋತ ಎಂಬ ಸತ್ಪುರುಷನನ್ನು ಸಂರಕ್ಷಿಸಿದರು.</verse>
				<verse number="8">ಆತನು ಆ ದುರ್ಜನರ ನಡುವೆ ಬಾಳುತ್ತಾ ಅವರ ದುಷ್ಕೃತ್ಯಗಳನ್ನು ಕಂಡು ಕೇಳುತ್ತಿದ್ದಾಗ, ಅವನ ನಿರ್ಮಲ ಹೃದಯ ದಿನೇದಿನೇ ಅತೀವ ವೇದನೆಯನ್ನು ಅನುಭವಿಸುತ್ತಿತ್ತು.</verse>
				<verse number="9">ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.</verse>
				<verse number="10">ಮುಖ್ಯವಾಗಿ, ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಬಲಿಯಾಗಿರುವವರನ್ನು ಮತ್ತು ದೇವರ ಅಧಿಕಾರವನ್ನು ತೃಣೀಕರಿಸುವವರನ್ನು ಅವರು ಶಿಕ್ಷಿಸದೆ ಬಿಡುವುದಿಲ್ಲ.</verse>
				<verse number="11">ಈ ಕಳ್ಳಬೋಧಕರು ಉದ್ಧಟರು, ಸ್ವೇಚ್ಛಾಪರರು, ಸ್ವರ್ಗನಿವಾಸಿಗಳನ್ನು ದೂಷಿಸುವವರು. ದೇವದೂತರು ಶಕ್ತಿಯಲ್ಲಿ ಮತ್ತು ಪರಾಕ್ರಮದಲ್ಲಿ ಶ್ರೇಷ್ಠರಾಗಿದ್ದರೂ ಸಹ ಈ ಸ್ವರ್ಗನಿವಾಸಿಗಳನ್ನು ಪ್ರಭುವಿನ ಮುಂದೆ ದೂಷಿಸುವುದೂ ಇಲ್ಲ, ಖಂಡಿಸುವುದೂ ಇಲ್ಲ.</verse>
				<verse number="12">ಸಹಜ ಪ್ರವೃತ್ತಿಯಿಂದ ಬೇಟೆಗಾಗಿಯೂ ಕೊಲೆಗಾಗಿಯೂ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತೆ ಬಾಳುವ ಈ ದುರ್ಬೋಧಕರಾದರೋ ತಮಗೆ ತಿಳಿಯದವುಗಳನ್ನು ದೂಷಣೆಮಾಡುತ್ತಾರೆ. ಆ ಪ್ರಾಣಿಗಳು ನಾಶವಾಗುವಂತೆಯೇ ಇವರೂ ನಾಶವಾಗುತ್ತಾರೆ.</verse>
				<verse number="13">ತಾವು ಮಾಡಿದ ಕೇಡಿಗೆ ಪ್ರತಿಯಾಗಿ ಕೇಡನ್ನೇ ಪಡೆಯುತ್ತಾರೆ. ಇವರು ಹಾಡುಹಗಲಿನಲ್ಲೇ ಏನುಬೇಕಾದರೂ ಮಾಡಿ, ದೈಹಿಕ ವ್ಯಾಮೋಹಗಳನ್ನು ತಣಿಸುವುದೇ ಸುಖವೆಂದು ಎಣಿಸುತ್ತಾರೆ. ವಂಚಕರಾದ ಇವರು ಪ್ರೇಮಭೋಜನಗಳಲ್ಲಿ ನಿಮ್ಮ ಸಂಗಡ ಸೇರಿ ತಿಂದುಕುಡಿಯುವಾಗ ನಿಮಗೆ ಕಳಂಕವನ್ನೂ ಮಾನನಷ್ಟವನ್ನೂ ತರುತ್ತಾರೆ.</verse>
				<verse number="14">ಇವರದು ಬರೀ ಕಾಮುಕ ಕಣ್ಣು; ಇವರು ಎಂದಿಗೂ ಇಂಗದ ಪಾಪಬಯಕೆಯುಳ್ಳವರು; ದುರ್ಬಲರನ್ನು ವಂಚಿಸಿ ವಶಪಡಿಸಿಕೊಳ್ಳುವುದೇ ಇವರ ಹವ್ಯಾಸ; ಲೋಭದಲ್ಲೇ ಪಳಗಿದ ಮನಸ್ಸುಳ್ಳವರು ಹಾಗೂ ಶಾಪಗ್ರಸ್ತ ಸಂತಾನದವರು ಇವರು!</verse>
				<verse number="15">ಇವರು ಹಾದಿತಪ್ಪಿದವರು, ಸನ್ಮಾರ್ಗವನ್ನು ತ್ಯಜಿಸಿದವರು; ಬೆಯೋರನ ಮಗ ಬಿಳಾಮನ ದಾರಿಯನ್ನು ಹಿಡಿದವರು.</verse>
				<verse number="16">ಬಿಳಾಮನು ಅನೀತಿಯಿಂದ ಹಣಗಳಿಸಿದ ಲಾಭಕೋರ; ತನ್ನ ಅಕ್ರಮಕ್ಕೆ ತಕ್ಕ ದಂಡನೆಯನ್ನು ಅನುಭವಿಸಿದವನು. ಮೂಕ ಹೇಸರಗತ್ತೆಯೊಂದು ಮಾನವನಂತೆ ಮಾತಾಡಿ ಈ ಪ್ರವಾದಿಯ ಮೂರ್ಖತನಕ್ಕೆ ತಡೆಹಾಕಿತು.</verse>
				<verse number="17">ಈ ಕಳ್ಳಬೋಧಕರು ನೀರಿಲ್ಲದ ಬಾವಿಗಳು, ಬಿರುಗಾಳಿಯಿಂದ ಚದರಿಹೊಗುವ ಮಂಜುಮೋಡಗಳು, ಕಾರ್ಗತ್ತಲಿನ ಕಂದಕವೇ ಅವರ ಪಾಲಿಗೆ ಕಟ್ಟಿಟ್ಟ ಬುತ್ತಿ.</verse>
				<verse number="18">ದುರ್ಮಾರ್ಗಿಗಳ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರನ್ನು ಇವರು ಜಂಬದ ಸೊಕ್ಕುಮಾತುಗಳಿಂದ, ಮೂರ್ಖ ಹೇಳಿಕೆಗಳಿಂದ, ಭೋಗ-ವಿಲಾಸಗಳ ಬಲೆಯಿಂದ ವಶಪಡಿಸಿಕೊಳ್ಳುತ್ತಾರೆ.</verse>
				<verse number="19">ತಾವೇ ದುರಭ್ಯಾಸಗಳಿಗೆ ಗುಲಾಮರಾಗಿದ್ದರೂ ತಾವು ವಶಪಡಿಸಿಕೊಂಡವರಿಗೆ ಸ್ವಾತಂತ್ರ್ಯವನ್ನು ತರುವ ಮಾತುಕೊಡುತ್ತಾರೆ. ಒಬ್ಬನು ಯಾವುದಕ್ಕೆ ಸೋಲುತ್ತಾನೋ ಅದಕ್ಕೆ ಅವನು ಗುಲಾಮನಾಗುತ್ತಾನೆ.</verse>
				<verse number="20">ನಮ್ಮ ಪ್ರಭು ಹಾಗೂ ಉದ್ಧಾರಕರಾದ ಯೇಸುಕ್ರಿಸ್ತರನ್ನು ಕುರಿತ ಜ್ಞಾನದ ಮೂಲಕ ಕೆಲವರು ಲೋಕದ ಕಲ್ಮಶದಿಂದ ಪಾರಾಗಿ ನಿರ್ಮಲರಾಗುತ್ತಾರೆ. ಇಂಥವರು ಮರಳಿ ಅದರಲ್ಲೇ ಸಿಲುಕಿಕೊಂಡು ಅದಕ್ಕೆ ಗುಲಾಮರಾದರೆ ಅವರ ಅಂತಿಮ ಗತಿ ಮೊದಲ ಗತಿಗಿಂತಲೂ ಅಧೋಗತಿಯಾಗಿರುತ್ತದೆ.</verse>
				<verse number="21">ಅವರು ನೀತಿಯ ಮಾರ್ಗವನ್ನು ಅರಿತುಕೊಂಡು ತಾವು ಸ್ವೀಕರಿಸಿದ ಪವಿತ್ರ ಆಜ್ಞೆಯನ್ನು ತಿರಸ್ಕರಿಸುವುದಕ್ಕಿಂತ ಅದನ್ನು ಅರಿಯದವರಾಗಿದ್ದರೆ ಒಳ್ಳೆಯದಾಗುತ್ತಿತ್ತು.</verse>
				<verse number="22">“ನಾಯಿ ತಾನು ಕಕ್ಕಿದ್ದನ್ನೇ ನೆಕ್ಕಲು ಹೋಯಿತು,” ಮತ್ತು “ಮೈ ತೊಳೆದ ಹಂದಿ ಕೊಳಚೆಯಲ್ಲಿ ಹೊರಳಲು ಹೋಯಿತು,” ಎಂಬ ಈ ಗಾದೆಗಳು ಇವರಿಗೆ ಸರಿಯಾಗಿ ಅನ್ವಯಿಸುತ್ತವೆ.</verse>
			</chapter>
			<chapter number="3">
				<verse number="1">ಪ್ರಿಯರೇ, ಈಗ ನಾನು ನಿಮಗೆ ಬರೆಯುತ್ತಿರುವುದು ಎರಡನೆಯ ಪತ್ರ. ಈ ಎರಡು ಪತ್ರಗಳಲ್ಲೂ ನಿಮ್ಮ ನಿರ್ಮಲ ಮನಸ್ಸನ್ನು ಪುನಶ್ಚೇತನಗೊಳಿಸಲು ಪ್ರಯತ್ನಿಸಿದ್ದೇನೆ.</verse>
				<verse number="2">ಪೂರ್ವಕಾಲದಲ್ಲಿ ಪವಿತ್ರ ಪ್ರವಾದಿಗಳು ಹೇಳಿದ ಮಾತುಗಳನ್ನು ಮತ್ತು ಪ್ರೇಷಿತರ ಮೂಲಕ, ಲೋಕೋದ್ಧಾರಕರಾದ ನಮ್ಮ ಪ್ರಭು ಕೊಟ್ಟ ಆಜ್ಞೆಗಳನ್ನು ನಿಮ್ಮ ಜ್ಞಾಪಕಕ್ಕೆ ತರಲು ಬಯಸಿದ್ದೇನೆ.</verse>
				<verse number="3">ಮೊತ್ತಮೊದಲನೆಯದಾಗಿ ನೀವು ಇದನ್ನು ನೆನಪಿನಲ್ಲಿಡಬೇಕು; ಅಂತ್ಯಕಾಲದಲ್ಲಿ ಕುಚೋದ್ಯಗಾರರು ಕಾಣಿಸಿಕೊಳ್ಳುವರು.</verse>
				<verse number="4">ಇವರು ತಮ್ಮ ದುರಾಶೆಗಳಿಗೆ ಬಲಿಯಾಗಿ, “ಆತನು ಮರಳಿ ಬರುವನು ಎಂಬ ವಾಗ್ದಾನವು ಏನಾಯಿತು? ನಮ್ಮ ಪಿತೃಗಳು ಮೃತರಾದರು; ಅಂದಿನಿಂದ ಸಮಸ್ತವೂ ಲೋಕಾದಿಯಿಂದಲೂ ಇದ್ದ ಹಾಗೆಯೇ ಇದೆಯಲ್ಲಾ,” ಎಂದು ಅಪಹಾಸ್ಯಮಾಡುವರು.</verse>
				<verse number="5">ಆದರೆ, ಅವರು ಒಂದು ವಿಷಯವನ್ನು ಉದ್ದೇಶಪೂರ್ವಕವಾಗಿ ಮರೆತುಬಿಡುತ್ತಾರೆ. ಅದೇನೆಂದರೆ, ಪ್ರಾರಂಭದಲ್ಲಿದ್ದ ಭೂಮ್ಯಾಕಾಶಗಳು ದೇವರ ವಾಕ್ಯದಿಂದಲೇ ಉಂಟಾದವು. ಜಲದಿಂದ, ಜಲದ ಮೂಲಕ ಭೂಮಿ ಉಂಟಾಯಿತು.</verse>
				<verse number="6">ಜಲಪ್ರಳಯದಿಂದಲೇ ಅಂದಿನ ಜಗತ್ತು ಮುಳುಗಿ ನಾಶವಾಯಿತು.</verse>
				<verse number="7">ಈಗಿರುವ ಭೂಮ್ಯಾಕಾಶಗಳನ್ನು ಅದೇ ವಾಕ್ಯದ ಬಲದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲಾಗಿದೆ. ದುರ್ಜನರು ವಿನಾಶವಾಗಬೇಕಾದ ನ್ಯಾಯತೀರ್ಪಿನ ದಿನದವರೆಗೂ ಇವನ್ನು ಉಳಿಸಲಾಗಿದೆ.</verse>
				<verse number="8">ಪ್ರಿಯರೇ, ಮತ್ತೊಂದು ವಿಷಯವನ್ನು ಮರೆಯದಿರಿ: ಪ್ರಭುವಿನ ದೃಷ್ಟಿಯಲ್ಲಿ ಒಂದು ದಿನ ಸಾವಿರ ವರ್ಷಗಳಂತೆಯೂ ಮತ್ತು ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ.</verse>
				<verse number="9">ಕೆಲವರು ಭಾವಿಸುವಂತೆ ಪ್ರಭು ತಮ್ಮ ವಾಗ್ದಾನಗಳನ್ನು ನೆರವೇರಿಸುವುದರಲ್ಲಿ ವಿಳಂಬ ಮಾಡುವವರಲ್ಲ; ಆದರೆ ಅವರು ನಿಮ್ಮ ವಿಷಯದಲ್ಲಿ ದೀರ್ಘಶಾಂತಿ, ಸಹನೆಯುಳ್ಳವರು. ಯಾರೊಬ್ಬನೂ ನಾಶವಾಗಬೇಕೆಂಬುದು ಅವರ ಇಚ್ಛೆಯಲ್ಲ; ಎಲ್ಲರೂ ಪಶ್ಚಾತ್ತಾಪಪಟ್ಟು ತಮಗೆ ಅಭಿಮುಖರಾಗಬೇಕೆಂಬುದೇ ಅವರ ಅಪೇಕ್ಷೆ.</verse>
				<verse number="10">ಪ್ರಭುವಿನ ದಿನ ಬಂದೇ ತೀರುವುದು. ಅದು ಕಳ್ಳನಂತೆಯೇ ಬರುವುದು. ಆಗ, ಆಕಾಶಮಂಡಲವು ಸಿಡಿಲ ಗರ್ಜನೆಯೊಂದಿಗೆ ಅಳಿದುಹೋಗುವುದು. ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಸುಟ್ಟು ಲಯವಾಗಿ ಹೋಗುವುವು. ಭೂಮಿಯೂ ಅದರಲ್ಲಿರುವ ಸಮಸ್ತವೂ ಉರಿದು ಭಸ್ಮವಾಗುವುವು.</verse>
				<verse number="11">ಇವೆಲ್ಲವೂ ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿ ಜೀವಿಸಬೇಕು? ಪರಿಶುದ್ಧರಾಗಿಯೂ ಭಕ್ತಿಪೂರಿತರಾಗಿಯೂ ಬಾಳಬೇಕು.</verse>
				<verse number="12">ದೇವರ ಆ ದಿನವನ್ನು ಎದುರುನೋಡುತ್ತಾ ಅದು ಬೇಗನೆ ಬರಲೆಂದು ಹಾರೈಸಬೇಕು. ಆ ದಿನ, ಆಕಾಶಮಂಡಲವು ಅಗ್ನಿಯಿಂದ ಉರಿದುಹೋಗುವುದು; ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಶಾಖದಿಂದ ಕರಗಿಹೋಗುವುವು.</verse>
				<verse number="13">ನಾವಾದರೋ, ದೇವರ ವಾಗ್ದಾನದ ಪ್ರಕಾರ ನೀತಿಯ ನೆಲೆಯಾಗಿರುವ ನೂತನ ಆಕಾಶಮಂಡಲವೂ ನೂತನ ಭೂಮಂಡಲವೂ ಬರುವುದನ್ನು ಎದುರು ನೋಡುತ್ತಿರುವೆವು.</verse>
				<verse number="14">ಪ್ರಿಯರೇ, ಇವುಗಳನ್ನು ಎದುರುನೋಡುವವರಾಗಿರುವ ನೀವು ದೇವರ ದೃಷ್ಟಿಯಲ್ಲಿ ನಿರ್ಮಲರೂ ನಿರ್ದೋಷಿಗಳೂ ಆಗಿದ್ದು ಶಾಂತಿಸಮಾಧಾನದಿಂದಿರಲು ಪ್ರಯತ್ನಿಸಿರಿ.</verse>
				<verse number="15">ನಮ್ಮ ಪ್ರಭುವಿನ ದೀರ್ಘಶಾಂತಿ ಹಾಗು ಸಹನೆ ನಮ್ಮ ಜೀವೋದ್ಧಾರಕ್ಕಾಗಿಯೇ ಎಂದು ತಿಳಿದುಕೊಳ್ಳಿ. ನಮ್ಮ ಪ್ರಿಯ ಸಹೋದರನಾದ ಪೌಲನೂ ಸಹ ತನಗೆ ದೇವರಿತ್ತ ಜ್ಞಾನದ ಪ್ರಕಾರ ಹೀಗೆಯೇ ನಿಮಗೆ ಬರೆದಿದ್ದಾನೆ.</verse>
				<verse number="16">ಆತನು ತನ್ನ ಪತ್ರಗಳಲ್ಲಿ ಈ ವಿಷಯವನ್ನು ಕುರಿತು ಪ್ರಸ್ತಾಪಿಸುವಾಗಲೆಲ್ಲಾ ಹೀಗೆಯೇ ಬೋಧಿಸಿದ್ದಾನೆ. ಅರ್ಥಮಾಡಿಕೊಳ್ಳಲು ಕಠಿಣವಾದ ಕೆಲವು ವಿಷಯಗಳು ಆತನ ಪತ್ರಗಳಲ್ಲಿ ಇವೆ. ಬುದ್ಧಿಹೀನರು ಹಾಗು ಚಂಚಲಚಿತ್ತರು ಪವಿತ್ರಗ್ರಂಥದ ಇತರ ಭಾಗಗಳಿಗೆ ಅಪಾರ್ಥಕಟ್ಟುವಂತೆ ಇವುಗಳಿಗೂ ಕಟ್ಟುತ್ತಾರೆ. ಹೀಗೆ, ತಮ್ಮ ವಿನಾಶವನ್ನು ತಾವೇ ತಂದುಕೊಳ್ಳುತ್ತಾರೆ.</verse>
				<verse number="17">ಆದಕಾರಣ ಪ್ರಿಯರೇ, ಈ ವಿಷಯಗಳನ್ನು ಮುಂಚಿತವಾಗಿಯೇ ತಿಳಿದುಕೊಂಡಿರುವ ನೀವು ಎಚ್ಚರಿಕೆಯಿಂದಿರಿ. ದುರ್ಜನರ ದುರ್ಬೋಧನೆಗೆ ಮರುಳಾಗದಿರಿ. ನಿಮ್ಮ ಸ್ಥಿರವಿಶ್ವಾಸವನ್ನು ಬಿಟ್ಟು ಭ್ರಷ್ಟರಾಗದಿರಿ.</verse>
				<verse number="18">ನಮ್ಮ ಪ್ರಭು ಮತ್ತು ಉದ್ಧಾರಕರಾದ ಯೇಸುಕ್ರಿಸ್ತರ ಅನುಗ್ರಹದಲ್ಲೂ ಅವರನ್ನು ಕುರಿತ ಜ್ಞಾನದಲ್ಲೂ ನೀವು ಅಭಿವೃದ್ಧಿಹೊಂದಿರಿ. ಅವರಿಗೆ ಈಗಲೂ ಯುಗಯುಗಾಂತರಕ್ಕೂ ಮಹಿಮೆಯುಂಟಾಗಲಿ! ಆಮೆನ್.</verse>
			</chapter>
		</book>
		<book number="62">
			<chapter number="1">
				<verse number="1">ನಿಮಗೆ ನಾವು ಪ್ರಚುರಪಡಿಸುವ ಸಜೀವವಾಣಿ ಆದಿಯಿಂದ ಇರುವಂಥಾದ್ದು. ಇದನ್ನು ಕಣ್ಣಾರೆ ಕಂಡಿದ್ದೇವೆ, ಕಿವಿಯಾರೆ ಕೇಳಿದ್ದೇವೆ, ಮನಸ್ಸಾರೆ ಗ್ರಹಿಸಿದ್ದೇವೆ ಮತ್ತು ಕೈಯಾರೆ ಮುಟ್ಟಿದ್ದೇವೆ.</verse>
				<verse number="2">ಆ ಜೀವ ಪ್ರತ್ಯಕ್ಷವಾಯಿತು. ಅದನ್ನು ನಾವು ನೋಡಿದ್ದೇವೆ. ಆ ಬಗ್ಗೆ ಸಾಕ್ಷಿ ಹೇಳುತ್ತೇವೆ. ಪಿತನ ಬಳಿಯಿದ್ದು ನಮಗೆ ಪ್ರತ್ಯಕ್ಷವಾದಂಥ ನಿತ್ಯಜೀವವನ್ನು ನಿಮಗೆ ಸಾರುತ್ತೇವೆ.</verse>
				<verse number="3">ಪಿತನೊಡನೆಯೂ ಅವರ ಪುತ್ರ ಕ್ರಿಸ್ತಯೇಸುವಿನೊಡನೆಯೂ ನಮಗಿರುವಂಥ ಅನ್ಯೋನ್ಯತೆಯಲ್ಲಿ ನೀವು ಸಹ ಭಾಗಿಗಳಾಗುವಂತೆ ನಾವು ಕಂಡುಕೇಳಿದ್ದನ್ನು ನಿಮಗೆ ಪ್ರಚುರಪಡಿಸುತ್ತೇವೆ.</verse>
				<verse number="4">ನಮ್ಮೆಲ್ಲರ ಆನಂದವು ಪರಿಪೂರ್ಣವಾಗುವಂತೆ ಇದನ್ನು ಬರೆಯುತ್ತಿದ್ದೇವೆ.</verse>
				<verse number="5">ದೇವರೇ ಬೆಳಕು. ಅವರಲ್ಲಿ ಕತ್ತಲು ಎಂಬುದೇ ಇಲ್ಲ. ಅವರ ಪುತ್ರನಿಂದಲೇ ನಾವು ಕೇಳಿದ ಈ ಸಂದೇಶವನ್ನು ನಿಮಗೆ ಸಾರುತ್ತಿದ್ದೇವೆ.</verse>
				<verse number="6">ನಾವು ಕತ್ತಲಲ್ಲಿ ಬಾಳುತ್ತಾ ದೇವರೊಡನೆ ಅನ್ಯೋನ್ಯವಾಗಿದ್ದೇವೆಂದು ಹೇಳಿದರೆ ನಾವು ಸುಳ್ಳುಗಾರರು, ಸತ್ಯಕ್ಕನುಸಾರ ಬಾಳದವರು.</verse>
				<verse number="7">ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.</verse>
				<verse number="8">ನಮ್ಮಲ್ಲಿ ಪಾಪವಿಲ್ಲವೆಂದು ನಾವು ಹೇಳಿಕೊಂಡರೆ, ನಮ್ಮನ್ನು ನಾವೇ ವಂಚಿಸಿಕೊಳ್ಳುತ್ತೇವೆ ಮತ್ತು ಸತ್ಯವೆಂಬುದೇ ನಮ್ಮಲ್ಲಿ ಇರುವುದಿಲ್ಲ.</verse>
				<verse number="9">ಪ್ರತಿಯಾಗಿ, ನಮ್ಮ ಪಾಪಗಳನ್ನು ಒಪ್ಪಿಕೊಂಡರೆ, ಆಗ ನಂಬಿಕಸ್ಥರೂ ನೀತಿವಂತರೂ ಆದ ದೇವರು ನಮ್ಮ ಪಾಪಗಳನ್ನು ಕ್ಷಮಿಸಿ ಎಲ್ಲಾ ಅನೀತಿ - ಅಧರ್ಮಗಳಿಂದ ನಮ್ಮನ್ನು ಶುದ್ಧೀಕರಿಸುತ್ತಾರೆ.</verse>
				<verse number="10">ನಾವು ಪಾಪಮಾಡಲಿಲ್ಲವೆಂದು ಹೇಳಿದರೆ ದೇವರನ್ನು ಸುಳ್ಳುಗಾರರನ್ನಾಗಿಸುತ್ತೇವೆ ಮತ್ತು ಅವರ ವಾಣಿ ನಮ್ಮಲ್ಲಿ ಇರುವುದಿಲ್ಲ.</verse>
			</chapter>
			<chapter number="2">
				<verse number="1">ಪ್ರಿಯಮಕ್ಕಳೇ, ನೀವು ಪಾಪಮಾಡಬಾರದೆಂದೇ ನಾನಿದನ್ನು ನಿಮಗೆ ಬರೆಯುತ್ತಿದ್ದೇನೆ. ಒಂದು ವೇಳೆ ಯಾರಾದರೂ ಪಾಪಮಾಡಿದ್ದೇ ಆದರೆ ನಮ್ಮ ಪರವಾಗಿ ಪಿತನ ಬಳಿಯಲ್ಲಿ ಬಿನ್ನಯಿಸಲು ಒಬ್ಬರಿದ್ದಾರೆ. ಅವರೇ ಸತ್ಯಸ್ವರೂಪರಾದ ಯೇಸುಕ್ರಿಸ್ತರು.</verse>
				<verse number="2">ಅವರೇ ನಮ್ಮ ಪಾಪಗಳನ್ನು ನಿವಾರಿಸುವ ಪರಿಹಾರ ಬಲಿಯಾಗಿದ್ದಾರೆ. ನಮ್ಮ ಪಾಪಗಳನ್ನು ಮಾತ್ರವಲ್ಲ, ಇಡೀ ಜಗತ್ತಿನ ಪಾಪಗಳನ್ನು ಅವರು ಪರಿಹರಿಸುತ್ತಾರೆ.</verse>
				<verse number="3">ನಾವು ದೇವರ ಆಜ್ಞೆಗಳನ್ನು ಕೈಗೊಂಡು ನಡೆದರೆ ಅದರಿಂದಲೇ ಅವರ ಅರಿವು ನಮಗಿದೆ ಎಂದು ಖಚಿತವಾಗುತ್ತದೆ.</verse>
				<verse number="4">ದೇವರನ್ನು ಬಲ್ಲೆನೆಂದು ಹೇಳಿಕೊಳ್ಳುತ್ತಾ ಅವರ ಆಜ್ಞೆಗಳನ್ನು ಕೈಗೊಳ್ಳದೆ ಇರುವವನು ಸುಳ್ಳುಗಾರ ಮತ್ತು ಸತ್ಯವೆಂಬುದೇ ಅವನಲ್ಲಿ ಇರುವುದಿಲ್ಲ.</verse>
				<verse number="5">ಆದರೆ ದೇವರ ವಾಕ್ಯವನ್ನು ಕೈಗೊಂಡು ನಡೆಯುವವನಲ್ಲಿ ಪ್ರೀತಿ ನಿಜಕ್ಕೂ ಸಿದ್ಧಿಗೆ ಬಂದಿರುತ್ತದೆ.</verse>
				<verse number="6">ತಾನು ದೇವರಲ್ಲಿ ನೆಲೆಸಿದ್ದೇನೆಂದು ಹೇಳುವವನು ಕ್ರಿಸ್ತಯೇಸು ಜೀವಿಸಿದಂತೆಯೇ ಜೀವಿಸಬೇಕು. ಇದರಿಂದಲೇ ನಾವು ದೇವರಲ್ಲಿ ನೆಲೆಗೊಂಡಿದ್ದೇವೆಂದು ತಿಳಿದುಕೊಳ್ಳುತ್ತೇವೆ.</verse>
				<verse number="7">ಪ್ರಿಯರೇ, ನಾನು ನಿಮಗೆ ಬರೆಯುತ್ತಿರುವುದು ಹೊಸ ಆಜ್ಞೆಯೇನೂ ಅಲ್ಲ, ಮೊದಲಿನಿಂದಲೂ ನೀವು ಪಡೆದಿರುವ ಹಳೆಯ ಆಜ್ಞೆಯೇ. ಈ ಆಜ್ಞೆಯೇ ನೀವು ಈಗಾಗಲೇ ಕೇಳಿರುವ ಸಂದೇಶ.</verse>
				<verse number="8">ಆದರೂ ನಾನೀಗ ನಿಮಗೆ ಬರೆಯುತ್ತಿರುವುದು ಒಂದು ವಿಧದಲ್ಲಿ ಹೊಸ ಆಜ್ಞೆಯೇ ಸರಿ. ಅದರ ನೈಜಗುಣವು ಕ್ರಿಸ್ತಯೇಸುವಿನಲ್ಲಿ ಬೆಳಗಿದಂತೆ, ನಿಮ್ಮ ಜೀವನದಲ್ಲೂ ಬೆಳಗುತ್ತದೆ. ಏಕೆಂದರೆ, ಕತ್ತಲು ಕಳೆದುಹೋಗುತ್ತಿದೆ; ನಿಜವಾದ ಬೆಳಕು ಈಗಾಗಲೇ ಪ್ರಕಾಶಿಸುತ್ತಿದೆ.</verse>
				<verse number="9">“ನಾನು ಬೆಳಕಿನಲ್ಲಿದ್ದೇನೆ” ಎಂದು ಹೇಳಿಕೊಂಡು ತನ್ನ ಸಹೋದರನನ್ನು ದ್ವೇಷಿಸುವವನು ಇನ್ನೂ ಕತ್ತಲಲ್ಲೇ ಇದ್ದಾನೆ.</verse>
				<verse number="10">ತನ್ನ ಸಹೋದರನನ್ನು ಪ್ರೀತಿಸುವವನಾದರೋ ಬೆಳಕಿನಲ್ಲಿ ನೆಲೆಗೊಂಡಿರುತ್ತಾನೆ. ಎಡವಿ ಪಾಪದಲ್ಲಿ ಬೀಳಿಸುವಂಥದ್ದೇನೂ ಅವನಲ್ಲಿ ಇರದು.</verse>
				<verse number="11">ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲಲ್ಲಿ ಇದ್ದಾನೆ; ಕತ್ತಲಲ್ಲೇ ನಡೆಯುತ್ತಾನೆ. ಕತ್ತಲು ಅವನನ್ನು ಕುರುಡಾಗಿಸಿರುವುದರಿಂದ ಎತ್ತ ಹೋಗುತ್ತಿದ್ದಾನೆಂದು ಅವನಿಗೇ ತಿಳಿಯದು.</verse>
				<verse number="12">ಬರೆಯುತಿಹೆನು ಪ್ರಿಯಮಕ್ಕಳಿರಾ, ಇದನ್ನು ಏಕೆನೆ, ಕ್ರಿಸ್ತನಾಮದ ನಿಮಿತ್ತ ಕ್ಷಮಿಸಲಾಯಿತು ನಿಮ್ಮ ಪಾಪಗಳನ್ನು.</verse>
				<verse number="13">ಬರೆಯುತಿಹೆನು ತಂದೆಗಳಿರಾ, ಇದನ್ನು ಏಕೆನೆ, ಬಲ್ಲವರಾದಿರಿ ಆದಿಯಿಂದಿರುವಾತನನ್ನು. ಬರೆಯುತಿಹೆನು ಯುವಜನರಿರಾ, ಇದನ್ನು ಏಕೆನೆ, ನೀವು ಜಯಿಸಿದ್ದಾಯಿತು ಆ ಕಡುಗೇಡಿಗನನ್ನು.</verse>
				<verse number="14">ಬರೆದಿಹೆನು ಮಕ್ಕಳಿರಾ, ಇದನ್ನು ಏಕೆನೆ, ಬಲ್ಲವರಾದಿರಿ ಪರಮ ಪಿತನನ್ನು. ಬರೆದಿಹೆನು‍ ಶಕ್ತಿಯುತ ಯುವಜನರಿರಾ, ಇದನ್ನು ಏಕೆನೆ, ನೆಲೆಗೊಳಿಸಿರುವಿರಿ ನಿಮ್ಮಲ್ಲಿ ದೈವವಾಕ್ಯವನ್ನು ಮಾತ್ರವಲ್ಲ, ನೀವು ಜಯಿಸಿದ್ದಾಯಿತು ಆ ಕಡುಗೇಡಿಗನನ್ನು.</verse>
				<verse number="15">ಲೋಕಕ್ಕೂ ಲೌಕಿಕವಾದವುಗಳಿಗೂ ನೀವು ಒಲಿಯಬಾರದು. ಈ ಲೋಕವನ್ನು ಒಲಿದರೆ ಪಿತನಲ್ಲಿ ನಿಮಗೆ ಒಲವಿಲ್ಲವೆಂದಾಯಿತು.</verse>
				<verse number="16">ಲೋಕಸಂಬಂಧವಾದ ದೈಹಿಕ ದುರಿಚ್ಛೆ, ಕಣ್ಣಿನ ಕಾಮುಕತೆ, ಐಶ್ವರ್ಯದ ಅಹಂಭಾವ - ಇಂಥವು ಪಿತನಿಂದ ಬಂದುವಲ್ಲ, ಲೋಕದಿಂದಲೇ ಬಂದುವು.</verse>
				<verse number="17">ಲೋಕವೂ ಅದರ ವ್ಯಾಮೋಹವೂ ಗತಿಸಿಹೋಗುವುವು. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಚಿರಂಜೀವಿಯಾಗಿ ಬಾಳುವನು.</verse>
				<verse number="18">ನನ್ನ ಪ್ರಿಯ ಮಕ್ಕಳೇ, ಅಂತಿಮ ಕಾಲ ಸಮೀಪಿಸಿತು. ಕ್ರಿಸ್ತವಿರೋಧಿ ಬರುವನೆಂದು ನೀವು ಕೇಳಿದ್ದೀರಿ. ಈಗಾಗಲೇ ಅನೇಕ ಕ್ರಿಸ್ತವಿರೋಧಿಗಳು ತಲೆದೋರಿದ್ದಾರೆ. ಇದರಿಂದ ಅಂತಿಮಕಾಲ ಸನ್ನಿಹಿತವಾಯಿತೆಂದು ನಮಗೆ ತಿಳಿದುಬರುತ್ತದೆ.</verse>
				<verse number="19">ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.</verse>
				<verse number="20">ನೀವಾದರೋ ಪರಿಶುದ್ಧವಾದವರಿಂದ ಅಭಿಷಿಕ್ತರಾಗಿದ್ದೀರಿ. ಸತ್ಯವನ್ನು ಅರಿತವರಾಗಿದ್ದೀರಿ.</verse>
				<verse number="21">ನೀವು ಸತ್ಯವನ್ನು ಅರಿಯದವರೆಂದು ಭಾವಿಸಿ ನಾನು ಬರೆಯುತ್ತಿಲ್ಲ, ನೀವು ಸತ್ಯವನ್ನು ಅರಿತವರು; ಸತ್ಯದಿಂದ ಸುಳ್ಳು ಜನಿಸದೆಂಬುದನ್ನು ತಿಳಿದವರು. ಆದುದರಿಂದ ನಾನು ನಿಮಗೆ ಬರೆದಿದ್ದೇನೆ.</verse>
				<verse number="22">ಅಸತ್ಯವಾದಿ ಎಂದರೆ ಯಾರು? ಯೇಸುವೇ ಕ್ರಿಸ್ತ ಎಂಬುದನ್ನು ಯಾರು ಅಲ್ಲಗಳೆಯುತ್ತಾನೋ ಅವನೇ ಅಸತ್ಯವಾದಿ; ಅವನೇ ಕ್ರಿಸ್ತವಿರೋಧಿ. ಅವನು ಪಿತನನ್ನು ಮತ್ತು ಪುತ್ರನನ್ನು ತಿರಸ್ಕರಿಸುತ್ತಾನೆ.</verse>
				<verse number="23">ಪುತ್ರನನ್ನು ತಿರಸ್ಕರಿಸುವವನು ಪಿತನನ್ನೂ ತಿರಸ್ಕರಿಸುತ್ತಾನೆ. ಪುತ್ರನನ್ನು ಅಂಗೀಕರಿಸುವವನು ಪಿತನನ್ನೂ ಅಂಗೀಕರಿಸುತ್ತಾನೆ.</verse>
				<verse number="24">ಮೊದಲಿನಿಂದಲೂ ನೀವು ಯಾವ ಸಂದೇಶವನ್ನು ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಸಲಿ. ಮೊದಲಿನಿಂದಲೂ ನೀವು ಕೇಳಿದ ಸಂದೇಶ ನಿಮ್ಮಲ್ಲಿ ನೆಲೆಸಿದರೆ ಪುತ್ರನಲ್ಲಿಯೂ ಪಿತನಲ್ಲಿಯೂ ನೀವು ನೆಲೆಸುತ್ತೀರಿ.</verse>
				<verse number="25">ಕ್ರಿಸ್ತಯೇಸು ನಮಗೆ ವಾಗ್ದಾನಮಾಡಿರುವ ನಿತ್ಯಜೀವ ಇದೇ.</verse>
				<verse number="26">ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸಬೇಕೆಂದಿರುವವರನ್ನು ಕುರಿತು ಇದನ್ನು ನಿಮಗೆ ಬರೆದಿದ್ದೇನೆ.</verse>
				<verse number="27">ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.</verse>
				<verse number="28">ಹೌದು ಪ್ರಿಯ ಮಕ್ಕಳೇ, ಕ್ರಿಸ್ತಯೇಸು ಪ್ರತ್ಯಕ್ಷರಾಗುವಾಗ, ಅವರ ಪುನರಾಗಮನದ ಪ್ರಯುಕ್ತ ಅವರ ಮುಂದೆ ನಾವು ನಾಚಿಕೆಪಡದೆ ಧೈರ್ಯದಿಂದಿರುವಂತೆ ಅವರಲ್ಲಿ ನೆಲೆಗೊಂಡಿರೋಣ.</verse>
				<verse number="29">ಕ್ರಿಸ್ತಯೇಸು ಸತ್ಯಸ್ವರೂಪಿ ಎಂಬುದನ್ನು ನೀವು ಬಲ್ಲಿರಿ. ಎಂದೇ, ಸತ್ಯಮಾರ್ಗದಲ್ಲಿ ನಡೆಯುವ ಪ್ರತಿಯೊಬ್ಬನೂ ಅವರಿಂದ ಜನಿಸಿದವನು ಎಂಬುದು ನಿಮಗೆ ವೇದ್ಯವಾಗಿರಬೇಕು.</verse>
			</chapter>
			<chapter number="3">
				<verse number="1">ನಾವು ದೇವರ ಮಕ್ಕಳು ಎನಿಸಿಕೊಂಡಿರಬೇಕಾದರೆ ಪಿತನು ನಮ್ಮನ್ನು ಎಷ್ಟಾಗಿ ಪ್ರೀತಿಸುತ್ತಾರೆಂಬುದನ್ನು ಗಮನಿಸಿರಿ. ನಿಜಕ್ಕೂ ನಾವು ದೇವರ ಮಕ್ಕಳೇ. ಲೋಕವು ಅವರನ್ನು ಅರಿತುಕೊಳ್ಳಲಿಲ್ಲವಾದ ಕಾರಣ ನಾವು ಎಂಥವರೆಂದು ಅದು ಅರಿತಿಲ್ಲ.</verse>
				<verse number="2">ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥರೂಪದಲ್ಲೇ ಕಾಣುತ್ತೇವೆ.</verse>
				<verse number="3">ಕ್ರಿಸ್ತಯೇಸುವಿನಲ್ಲಿ ನಂಬಿಕೆ ನಿರೀಕ್ಷೆಯನ್ನಿಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧವಾಗಿಟ್ಟುಕೊಳ್ಳುತ್ತಾನೆ.</verse>
				<verse number="4">ಪಾಪಮಾಡುವ ಪ್ರತಿಯೊಬ್ಬನೂ ದೇವರ ಆಜ್ಞೆಯನ್ನು ಮೀರುತ್ತಾನೆ. ದೇವರ ಆಜ್ಞೆಯನ್ನು ಉಲ್ಲಂಘಿಸುವುದೇ ಪಾಪ.</verse>
				<verse number="5">ಪಾಪರಹಿತರಾದ ಕ್ರಿಸ್ತಯೇಸು ಪಾಪಪರಿಹಾರ ಮಾಡಲೆಂದೇ ಕಾಣಿಸಿಕೊಂಡರೆಂದು ನೀವು ಬಲ್ಲಿರಿ.</verse>
				<verse number="6">ಅವರಲ್ಲಿ ನೆಲೆಸಿರುವ ಪ್ರತಿಯೊಬ್ಬನೂ ಪಾಪಮಾಡನು. ಪಾಪಮಾಡುವವನು ಅವರನ್ನು ಕಂಡವನೂ ಅಲ್ಲ, ಅರಿತವನೂ ಅಲ್ಲ.</verse>
				<verse number="7">ಪ್ರಿಯಮಕ್ಕಳೇ, ನಿಮ್ಮನ್ನು ಸನ್ಮಾರ್ಗದಿಂದ ತಪ್ಪಿಸುವುದಕ್ಕೆ ಯಾರಿಗೂ ಅವಕಾಶ ಕೊಡಬೇಡಿ. ಕ್ರಿಸ್ತಯೇಸು ಸತ್ಯಸ್ವರೂಪಿಯಾಗಿರುವಂತೆಯೇ ಸತ್ಯಕ್ಕನುಸಾರ ನಡೆಯುವ ಪ್ರತಿಯೊಬ್ಬನೂ ಸತ್ಯವಂತನೇ.</verse>
				<verse number="8">ಪಾಪಮಾಡುವವನು ಸೈತಾನನ ಸಂತಾನದವನು. ಸೈತಾನನು ಆದಿಯಿಂದಲೂ ಪಾಪಮಾಡಿದವನೇ. ಅವನ ದುಷ್ಕೃತ್ಯಗಳನ್ನು ವಿನಾಶಗೊಳಿಸಲೆಂದೇ ದೇವರ ಪುತ್ರ ಕಾಣಿಸಿಕೊಂಡಿದ್ದು.</verse>
				<verse number="9">ದೇವರಿಂದ ಜನಿಸಿದ ಯಾವನೂ ಪಾಪಮಾಡನು. ದೇವರ ಜೀವದ ಕುಡಿ ಅವನಲ್ಲಿರುವುದು. ಅವನು ಪಾಪದಲ್ಲಿ ಜೀವಿಸನು. ಏಕೆಂದರೆ, ಅವನು ದೇವರಿಂದ ಜನಿಸಿದವನು.</verse>
				<verse number="10">ಸನ್ಮಾರ್ಗದಲ್ಲಿ ನಡೆಯದವನೂ ಸಹೋದರನನ್ನು ಪ್ರೀತಿಸದವನೂ ದೇವರಿಂದ ಜನಿಸಿದವನಲ್ಲ. ಹೀಗೆ ದೇವರ ಮಕ್ಕಳು ಯಾರು ಮತ್ತು ಸೈತಾನನ ಮಕ್ಕಳು ಯಾರು ಎಂಬುದನ್ನು ತಿಳಿಯಬಹುದು.</verse>
				<verse number="11">ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು ಎಂಬುದೇ ಮೊತ್ತಮೊದಲಿನಿಂದಲೂ ನೀವು ಕೇಳಿದ ಸಂದೇಶ.</verse>
				<verse number="12">ತನ್ನ ಸಹೋದರನನ್ನೇ ಕೊಂದ ಕಾಯಿನನಂತೆ ನಾವು ಇರಬಾರದು. ಅವನು ಕಡುಕೇಡಿಗನ ಕುವರ. ಅವನು ಕೊಂದುದಾದರೂ ಏಕೆ? ತನ್ನ ಕೃತ್ಯಗಳು ದುಷ್ಟವಾಗಿದ್ದು ತನ್ನ ಸಹೋದರನ ಕೃತ್ಯಗಳು ಧರ್ಮಿಷ್ಠವಾಗಿದ್ದುದರಿಂದ ಅಲ್ಲವೇ?</verse>
				<verse number="13">ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿ.</verse>
				<verse number="14">ನಾವು ನಮ್ಮ ಸಹೋದರರನ್ನು ಪ್ರೀತಿಸುವುದರಿಂದ ಸಾವಿನಿಂದ ಜೀವಕ್ಕೆ ಸಾಗಿದ್ದೇವೆಂದು ತಿಳಿದಿದ್ದೇವೆ. ಪ್ರೀತಿಸದೆ ಇರುವವನು ಸಾವಿನಲ್ಲೇ ನೆಲೆಸಿರುತ್ತಾನೆ.</verse>
				<verse number="15">ತನ್ನ ಸಹೋದರರನ್ನು ದ್ವೇಷಿಸುವವನು ಕೊಲೆಗಾರನೇ ಹೌದು. ಯಾವ ಕೊಲೆಗಾರನಲ್ಲೂ ನಿತ್ಯಜೀವ ಇರದೆಂದು ನೀವು ಬಲ್ಲಿರಿ.</verse>
				<verse number="16">ಕ್ರಿಸ್ತಯೇಸು ನಮಗೋಸ್ಕರ ತಮ್ಮ ಪ್ರಾಣವನ್ನೇ ತೆತ್ತರು. ಇದರಿಂದ ಪ್ರೀತಿ ಎಂತಹುದೆಂದು ನಾವು ಅರಿತುಕೊಂಡೆವು. ನಾವೂ ಕೂಡ ಸಹೋದರರಿಗಾಗಿ ಪ್ರಾಣಾರ್ಪಣೆ ಮಾಡಲು ಬದ್ಧರಾಗಿದ್ದೇವೆ.</verse>
				<verse number="17">ಲೋಕದ ಸುಖಸಂಪತ್ತುಳ್ಳ ಒಬ್ಬನು, ಕುಂದುಕೊರತೆಯಲ್ಲಿ ಸಿಲುಕಿರುವ ತನ್ನ ಸಹೋದರನನ್ನು ಕಂಡಾಗಲೂ ಮನಕರಗದಿದ್ದರೆ ಅವನಲ್ಲಿ ದೇವರ ಪ್ರೀತಿ ಹೇಗೆ ತಾನೇ ನೆಲೆಸೀತು?</verse>
				<verse number="18">ಪ್ರಿಯಮಕ್ಕಳೇ, ನಾವು ಬರಿಯ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರಬಾರದು. ನಮ್ಮ ಪ್ರೀತಿ ಸತ್ಯದಲ್ಲೂ ಕೃತ್ಯದಲ್ಲೂ ವ್ಯಕ್ತವಾಗಬೇಕು.</verse>
				<verse number="19">ಹೀಗೆ ನಾವು ಸತ್ಯಕ್ಕೆ ಸೇರಿದವರು ಎಂಬುದು ಮನದಟ್ಟಾಗುವುದಲ್ಲದೆ ದೇವರ ಮುಂದೆ ನಮ್ಮ ಮನಸ್ಸು ನೆಮ್ಮದಿಯಿಂದಿರುತ್ತದೆ.</verse>
				<verse number="20">ಯಾವ ವಿಷಯದಲ್ಲಾದರೂ ನಮ್ಮ ಮನಸ್ಸಾಕ್ಷಿ ನಮ್ಮನ್ನು ಖಂಡಿಸಿದ್ದೇ ಆದರೆ ಎಲ್ಲವನ್ನೂ ಬಲ್ಲ ದೇವರು ನಮ್ಮ ಮನಸ್ಸಾಕ್ಷಿಗಿಂತಲೂ ದೊಡ್ಡವರೆಂಬುದು ನಮಗೆ ತಿಳಿದೇ ಇರುತ್ತದೆ.</verse>
				<verse number="21">ಪ್ರಿಯರೇ, ನಮ್ಮ ಮನಸ್ಸಾಕ್ಷಿ ನಮ್ಮನ್ನು ಖಂಡಿಸದಿದ್ದರೆ, ನಾವು ದೇವರ ಮುಂದೆ ಧೈರ್ಯದಿಂದಿರಲು ಸಾಧ್ಯವಾಗುತ್ತದೆ.</verse>
				<verse number="22">ನಾವು ದೇವರ ಆಜ್ಞೆಗಳಿಗೆ ವಿಧೇಯರಾಗಿ ಅವರಿಗೆ ಮೆಚ್ಚುಗೆಯಾದವುಗಳನ್ನೇ ಮಾಡುವುದರಿಂದ ನಾವು ಕೋರುವುದೆಲ್ಲವನ್ನೂ ಅವರಿಂದ ಪಡೆಯುತ್ತೇವೆ.</verse>
				<verse number="23">ನಾವು ದೇವರ ಪುತ್ರ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟು ಅವರು ವಿಧಿಸಿದಂತೆ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದೇ ದೇವರ ಆಜ್ಞೆ.</verse>
				<verse number="24">ದೇವರ ಆಜ್ಞೆಯನ್ನು ಪಾಲಿಸುವವನು ಅವರಲ್ಲಿ ನೆಲೆಸಿರುತ್ತಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ. ದೇವರು ನಮ್ಮಲ್ಲಿ ನೆಲೆಸಿದ್ದಾರೆಂದು ಅವರು ದಯಪಾಲಿಸುವ ಪವಿತ್ರಾತ್ಮರಿಂದಲೇ ತಿಳಿದುಕೊಳ್ಳುತ್ತೇವೆ.</verse>
			</chapter>
			<chapter number="4">
				<verse number="1">ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.</verse>
				<verse number="2">ದೇವರ ಆತ್ಮದಿಂದ ಬಂದ ಪ್ರೇರಣೆಯನ್ನು ನೀವು ಹೀಗೆ ಗುರುತಿಸಬಹುದು; ಮನುಷ್ಯ ಆಗಿ ಬಂದ ಕ್ರಿಸ್ತಯೇಸುವನ್ನು ಒಪ್ಪಿಕೊಳ್ಳುವ ಆತ್ಮವು ದೇವರಿಂದ ಪ್ರೇರಿತವಾದುದು.</verse>
				<verse number="3">ಯೇಸುವನ್ನು ಒಪ್ಪಿಕೊಳ್ಳದ ಆತ್ಮ ದೇವರಿಂದ ಪ್ರೇರಿತವಾದುದಲ್ಲ. ಅದು ಕ್ರಿಸ್ತವಿರೋಧಿಯ ಆತ್ಮ. ಅದು ಬರುವುದೆಂದು ನೀವು ಕೇಳಿದ್ದೀರಿ; ಈಗಾಗಲೇ ಅದು ಲೋಕದಲ್ಲಿ ತಲೆದೋರಿದೆ.</verse>
				<verse number="4">ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರು. ಲೋಕದಲ್ಲಿರುವ ದುರಾತ್ಮಕ್ಕಿಂತಲೂ ನಿಮ್ಮಲ್ಲಿರುವ ಆತ್ಮವು ಶ್ರೇಷ್ಠವಾದುದು. ಆದ್ದರಿಂದಲೇ ಆ ಕಪಟ ಪ್ರವಾದಿಗಳನ್ನು ಜಯಿಸಿದ್ದೀರಿ.</verse>
				<verse number="5">ಅವರು ಲೋಕಕ್ಕೆ ಸೇರಿದವರು. ಆದ್ದರಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ. ಎಂದೇ, ಲೋಕವು ಅವರಿಗೆ ಕಿವಿಗೊಡುತ್ತದೆ.</verse>
				<verse number="6">ನಾವಾದರೋ ದೇವರಿಗೆ ಸೇರಿದವರು. ದೇವರನ್ನು ಅರಿತವನು ನಮಗೆ ಕಿವಿಗೊಡುತ್ತಾನೆ. ದೇವರಿಗೆ ಸೇರದವನು ನಮಗೆ ಕಿವಿಗೊಡುವುದಿಲ್ಲ. ಇದರಿಂದಲೇ ಸತ್ಯವನ್ನು ಸಾರುವ ಆತ್ಮ ಯಾವುದು ಮತ್ತು ಅಸತ್ಯವನ್ನು ಸಾರುವ ಆತ್ಮ ಯಾವುದು ಎಂಬುದು ನಮಗೆ ತಿಳಿಯುತ್ತದೆ.</verse>
				<verse number="7">ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಪ್ರೀತಿ ದೇವರಿಂದ ಉಗಮವಾದುದು. ಪ್ರೀತಿಸುವವನು ದೇವರ ಮಗನು. ಅವನು ದೇವರನ್ನು ಬಲ್ಲವನು.</verse>
				<verse number="8">ಪ್ರೀತಿಸದವನು ದೇವರನ್ನು ಬಲ್ಲವನಲ್ಲ. ಏಕೆಂದರೆ, ದೇವರು ಪ್ರೀತಿಸ್ವರೂಪಿ.</verse>
				<verse number="9">ತಮ್ಮ ಏಕೈಕ ಪುತ್ರನ ಮುಖಾಂತರ ನಾವು ಸಜ್ಜೀವವನ್ನು ಪಡೆಯುವಂತೆ ದೇವರು ಅವರನ್ನು ಲೋಕಕ್ಕೆ ಕಳುಹಿಸಿದರು. ನಮ್ಮ ಮೇಲೆ ದೇವರಿಗಿರುವ ಪ್ರೀತಿ ಹೀಗೆ ವ್ಯಕ್ತವಾಯಿತು.</verse>
				<verse number="10">ನಾವು ದೇವರನ್ನು ಪ್ರೀತಿಸಿದ್ದರಲ್ಲಿ ಅಲ್ಲ, ಅವರು ನಮ್ಮನ್ನು ಪ್ರೀತಿಸಿ ನಮ್ಮ ಪಾಪನಿವಾರಣಾರ್ಥವಾಗಿ ತಮ್ಮ ಪುತ್ರನನ್ನು ಕಳುಹಿಸಿದ್ದರಲ್ಲಿಯೇ ಪ್ರೀತಿಯ ನಿಜಗುಣ ತೋರಿಬರುತ್ತದೆ.</verse>
				<verse number="11">ಪ್ರಿಯರೇ, ದೇವರೇ ನಮ್ಮನ್ನು ಇಷ್ಟಾಗಿ ಪ್ರೀತಿಸಿರುವಲ್ಲಿ ನಾವು ಸಹ ಒಬ್ಬರನ್ನೊಬ್ಬರು ಪ್ರೀತಿಸಲೇಬೇಕು.</verse>
				<verse number="12">ದೇವರನ್ನು ಯಾರೂ ಎಂದೂ ನೋಡಿಲ್ಲ. ಆದರೂ ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಸಿರುತ್ತಾರೆ. ಅವರ ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.</verse>
				<verse number="13">ದೇವರು ನಮಗೆ ತಮ್ಮ ಆತ್ಮವನ್ನು ನೀಡಿರುವುದರಿಂದಲೇ ನಾವು ಅವರಲ್ಲಿಯೂ ಅವರು ನಮ್ಮಲ್ಲಿಯೂ ನೆಲೆಸಿರುವುದನ್ನು ತಿಳಿದುಕೊಳ್ಳುತ್ತೇವೆ.</verse>
				<verse number="14">ಪಿತನು ತಮ್ಮ ಪುತ್ರನನ್ನು ಲೋಕೋದ್ಧಾರಕನನ್ನಾಗಿ ಕಳುಹಿಸಿಕೊಟ್ಟದ್ದನ್ನು ನಾವು ಕಣ್ಣಾರೆ ಕಂಡಿದ್ದೇವೆ. ಇದರ ವಿಷಯವಾಗಿ ಸಾಕ್ಷಿ ಹೇಳುತ್ತೇವೆ.</verse>
				<verse number="15">ಯೇಸುವೇ ದೇವರ ಪುತ್ರನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಸಿದ್ದಾರೆ; ಅವನೂ ದೇವರಲ್ಲಿ ನೆಲೆಸಿದ್ದಾನೆ.</verse>
				<verse number="16">ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿ ನಮಗೆ ಗೊತ್ತಿದೆ. ಅದರಲ್ಲಿ ನಮಗೆ ವಿಶ್ವಾಸವಿದೆ. ದೇವರು ಪ್ರೀತಿಸ್ವರೂಪಿ. ಪ್ರೀತಿಯಲ್ಲಿ ನೆಲೆಸಿರುವವನು ದೇವರಲ್ಲಿ ನೆಲೆಸಿದ್ದಾನೆ. ದೇವರೂ ಅವನಲ್ಲಿ ನೆಲೆಸಿರುತ್ತಾರೆ.</verse>
				<verse number="17">ಇದರಿಂದಾಗಿ, ಪ್ರೀತಿ ನಮ್ಮಲ್ಲಿ ಸಿದ್ಧಿಗೆ ಬಂದಿರುತ್ತದೆ; ನ್ಯಾಯತೀರ್ಪಿನ ದಿನದಂದು ನಾವು ಭರವಸೆಯಿಂದಿರುತ್ತೇವೆ. ಈ ಲೋಕದಲ್ಲಿ ನಮ್ಮ ಬಾಳು ಕ್ರಿಸ್ತಯೇಸುವಿನ ಬಾಳಿನಂತೆ ಇರುವುದರಿಂದಲೇ ಆ ಭರವಸೆ ನಮಗೆ ಇರುತ್ತದೆ.</verse>
				<verse number="18">ಪ್ರೀತಿ ಇರುವಲ್ಲಿ ಭೀತಿ ಇರುವುದಿಲ್ಲ. ಪೂರ್ಣ ಪ್ರೀತಿ ಭೀತಿಯನ್ನು ಹೊರದೂಡುತ್ತದೆ. ಭೀತಿ ಇರುವಲ್ಲಿ ಯಾತನೆ ಇರುತ್ತದೆ. ಭೀತಿಯಿಂದಿರುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.</verse>
				<verse number="19">ದೇವರು ನಮ್ಮನ್ನು ಮೊದಲು ಪ್ರೀತಿಸಿದ್ದರಿಂದಲೇ ನಾವು ಪ್ರೀತಿಸುತ್ತೇವೆ.</verse>
				<verse number="20">ತಾನು ದೇವರನ್ನು ಪ್ರೀತಿಸುತ್ತೇನೆಂದು ಒಬ್ಬನು ಹೇಳುತ್ತಾ ತನ್ನ ಸಹೋದರನನ್ನು ದ್ವೇಷಿಸಿದರೆ, ಅವನು ಸುಳ್ಳುಗಾರನಾಗುತ್ತಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಹೇಗೆ ಪ್ರೀತಿಸಿಯಾನು?</verse>
				<verse number="21">ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬುದು ಕ್ರಿಸ್ತಯೇಸು ನಮಗೆ ಮಾಡಿರುವ ಆಜ್ಞೆ.</verse>
			</chapter>
			<chapter number="5">
				<verse number="1">ಯೇಸುವೇ ‘ಕ್ರಿಸ್ತ’ ಎಂದು ವಿಶ್ವಾಸಿಸುವ ಪ್ರತಿಯೊಬ್ಬನೂ ದೇವರ ಮಗು. ತಂದೆಯನ್ನು ಪ್ರೀತಿಸುವವನು ಆತನ ಮಗುವನ್ನೂ ಪ್ರೀತಿಸುತ್ತಾನೆ.</verse>
				<verse number="2">ದೇವರನ್ನು ಪ್ರೀತಿಸಿ, ಅವರ ಆಜ್ಞೆಗಳನ್ನು ಪಾಲಿಸುವುದರಿಂದ ನಾವು ದೇವರ ಮಕ್ಕಳನ್ನು ಪ್ರೀತಿಸುತ್ತೇವೆಂಬುದು ನಿಶ್ಚಯ ಆಗುತ್ತದೆ.</verse>
				<verse number="3">ದೇವರನ್ನು ಪ್ರೀತಿಸುವುದು ಎಂದರೆ ಅವರು ಕೊಟ್ಟ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ. ಅವರ ಆಜ್ಞೆಗಳು ನಮಗೆ ಹೊರೆಯೇನೂ ಅಲ್ಲ.</verse>
				<verse number="4">ದೇವರಿಂದ ಜನಿಸಿದ ಪ್ರತಿ ಒಬ್ಬನೂ ಲೋಕವನ್ನು ಜಯಿಸುತ್ತಾನೆ. ಲೋಕವನ್ನು ಜಯಿಸುವಂಥದು ನಮ್ಮ ವಿಶ್ವಾಸವೇ.</verse>
				<verse number="5">ಯೇಸುವೇ ದೇವರ ಪುತ್ರನೆಂದು ನಂಬಿದವರೇ ಹೊರತು ಲೋಕವನ್ನು ಜಯಿಸಲು ಬೇರೆ ಯಾರಿಂದ ಸಾಧ್ಯ?</verse>
				<verse number="6">ಕ್ರಿಸ್ತಯೇಸುವೇ ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು. ಜಲದಿಂದ ಮಾತ್ರವಲ್ಲ ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು.</verse>
				<verse number="7">ಇದಕ್ಕೆ ಪವಿತ್ರಾತ್ಮ ಸಾಕ್ಷಿ. ಏಕೆಂದರೆ, ಪವಿತ್ರಾತ್ಮ ಸತ್ಯಸ್ವರೂಪಿ.</verse>
				<verse number="8">ಹೀಗೆ ಪವಿತ್ರಾತ್ಮ, ಜಲ ಮತ್ತು ರಕ್ತವೆಂಬ ಮೂರು ಸಾಕ್ಷಿಗಳು ಇವೆ. ಈ ಮೂರೂ ಕೊಡುವ ಸಾಕ್ಷ್ಯ ಒಂದೇ.</verse>
				<verse number="9">ಮನುಷ್ಯರು ಕೊಡುವ ಸಾಕ್ಷ್ಯವನ್ನು ನಾವು ಅಂಗೀಕರಿಸುತ್ತೇವೆ. ದೇವರು ನೀಡುವ ಸಾಕ್ಷ್ಯ ಅದಕ್ಕಿಂತಲೂ ಶ್ರೇಷ್ಠವಾದುದು. ದೇವರ ಈ ಸಾಕ್ಷ್ಯ ಅವರ ಪುತ್ರನನ್ನು ಕುರಿತದ್ದಾಗಿದೆ.</verse>
				<verse number="10">ದೇವರ ಪುತ್ರನಲ್ಲಿ ವಿಶ್ವಾಸವಿಡುವವನು ಈ ಸಾಕ್ಷ್ಯವನ್ನು ತನ್ನ ಅಂತರಂಗದಲ್ಲೇ ಹೊಂದಿರುತ್ತಾನೆ. ದೇವರಲ್ಲಿ ವಿಶ್ವಾಸವಿಡದವನಾದರೋ ಅವರನ್ನು ಸುಳ್ಳುಗಾರರನ್ನಾಗಿಸುತ್ತಾನೆ. ಹೇಗೆಂದರೆ, ದೇವರು ತಮ್ಮ ಪುತ್ರನ ಪರವಾಗಿ ಕೊಟ್ಟ ಸಾಕ್ಷ್ಯದಲ್ಲಿ ಅವನಿಗೆ ನಂಬಿಕೆಯಿಲ್ಲ.</verse>
				<verse number="11">ದೇವರು ನಮಗೆ ನಿತ್ಯಜೀವವನ್ನು ಅನುಗ್ರಹಿಸಿದ್ದಾರೆ. ಆ ಜೀವ ಅವರ ಪುತ್ರನಲ್ಲಿದೆ ಎಂಬುದೇ ಈ ಸಾಕ್ಷ್ಯ.</verse>
				<verse number="12">ಯಾರಲ್ಲಿ ದೇವರ ಪುತ್ರ ಇದ್ದಾನೋ ಅವನಲ್ಲಿ ಆ ಜೀವವಿರುತ್ತದೆ. ಯಾರಲ್ಲಿ ದೇವರ ಪುತ್ರನಿಲ್ಲವೋ ಅವನಲ್ಲಿ ಆ ಜೀವ ಇರುವುದಿಲ್ಲ.</verse>
				<verse number="13">ದೇವರ ಪುತ್ರನ ನಾಮದಲ್ಲಿ ವಿಶ್ವಾಸ ಇಟ್ಟಿರುವ ನೀವು ನಿತ್ಯಜೀವವನ್ನು ಪಡೆದವರು ಎಂಬುದನ್ನು ತಿಳಿಸಲೆಂದೇ ನಾನು ನಿಮಗೆ ಇದನ್ನೆಲ್ಲಾ ಬರೆದಿದ್ದೇನೆ.</verse>
				<verse number="14">ದೇವರ ಚಿತ್ತಾನುಸಾರ ಏನನ್ನು ಬೇಡಿಕೊಂಡರೂ ಅವರು ನಮ್ಮ ವಿಜ್ಞಾಪನೆಗೆ ಕಿವಿಗೊಡುತ್ತಾರೆಂಬ ಭರವಸೆ ನಮಗಿದೆ.</verse>
				<verse number="15">ನಾವು ಏನನ್ನು ಬೇಡಿಕೊಂಡರೂ ನಮ್ಮ ವಿಜ್ಞಾಪನೆಗೆ ದೇವರು ಕಿವಿಗೊಡುತ್ತಾರೆ ಎಂಬುದು ನಮಗೆ ತಿಳಿದಿದ್ದರೆ ನಾವು ಬೇಡಿದುದೆಲ್ಲವೂ ನಮಗೆ ಲಭಿಸಿದಂತೆಯೇ ಎಂಬುದೂ ನಮಗೆ ತಿಳಿದಿದೆ.</verse>
				<verse number="16">ಮಾರಕವಲ್ಲದ ಪಾಪವೊಂದನ್ನು ಸಹೋದರನು ಮಾಡುವುದನ್ನು ಯಾರಾದರೂ ಕಂಡರೆ, ಆ ಸಹೋದರನಿಗಾಗಿ ದೇವರಲ್ಲಿ ಬೇಡಿಕೊಳ್ಳಿರಿ. ದೇವರು ಆ ಸಹೋದರನಿಗೆ ಸಜ್ಜೀವವನ್ನು ಅನುಗ್ರಹಿಸುವರು. ಮಾರಕವಲ್ಲದ ಪಾಪವನ್ನು ಕುರಿತೇ ಈ ಮಾತನ್ನು ಹೇಳುತ್ತಿದ್ದೇನೆ. ಮಾರಕವಾದ ಪಾಪವೂ ಉಂಟು. ಅದರ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುತ್ತಿಲ್ಲ.</verse>
				<verse number="17">ಅಕ್ರಮವಾದುದೆಲ್ಲವೂ ಪಾಪವೇ. ಆದರೆ ಮಾರಕವಲ್ಲದಂಥ ಪಾಪವೂ ಇದೆ.</verse>
				<verse number="18">ನಮಗೆ ತಿಳಿದಿರುವಂತೆ ದೇವರಿಂದ ಜನಿಸಿದವನು ಪಾಪಜೀವಿಯಾಗಿರುವುದಿಲ್ಲ. ಏಕೆಂದರೆ, ದೇವರ ಪುತ್ರನ ರಕ್ಷಣೆ ಅವನಿಗಿದೆ. ಕೇಡಿಗನ ಹಿಡಿತಕ್ಕೆ ಅವನು ಸಿಗನು.</verse>
				<verse number="19">ಇಡೀ ಲೋಕವು ಕೇಡಿಗನ ವಶದಲ್ಲಿ ಇದ್ದರು ಸಹ ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ.</verse>
				<verse number="20">ದೇವರ ಪುತ್ರ ಆಗಮಿಸಿ, ಸತ್ಯಸ್ವರೂಪರಾದ ದೇವರನ್ನು ನಾವು ತಿಳಿದುಕೊಳ್ಳುವಂತೆ ನಮಗೆ ಅರಿವನ್ನು ನೀಡಿದ್ದಾರೆ. ಇದನ್ನು ನಾವು ಬಲ್ಲೆವು. ದೇವರ ಪುತ್ರರಾದ ಯೇಸುಕ್ರಿಸ್ತರಲ್ಲಿ ನೆಲೆಸಿರುವ ನಾವು ಸತ್ಯಸ್ವರೂಪಿಯಲ್ಲೇ ನೆಲೆಸಿದ್ದೇವೆ. ನಿಜವಾದ ದೇವರೂ ನಿತ್ಯಜೀವವೂ ಇವರೇ.</verse>
				<verse number="21">ಪ್ರಿಯ ಮಕ್ಕಳೇ, ಮಿಥ್ಯ ದೇವರುಗಳಿಂದ ನೀವು ದೂರವಿರಿ.</verse>
			</chapter>
		</book>
		<book number="63">
			<chapter number="1">
				<verse number="1">ದೇವರಿಂದ ಆಯ್ಕೆಯಾದ ಶ್ರೀಮಾತೆಗೂ ಆಕೆಯ ಮಕ್ಕಳಿಗೂ - ಸಭಾಹಿರಿಯನಾದ ನಾನು ಬರೆಯುವ ಪತ್ರ.</verse>
				<verse number="2">ನಮ್ಮಲ್ಲಿ ನೆಲೆಗೊಂಡಿರುವ ಹಾಗೂ ನಮ್ಮಲ್ಲಿ ಶಾಶ್ವತವಾಗಿರುವ ಸತ್ಯದ ಪ್ರಯುಕ್ತ ನಾನು ಮತ್ತು ಸತ್ಯವನ್ನು ಅರಿತಿರುವ ಎಲ್ಲರು ನಿಮ್ಮಲ್ಲಿ ಪ್ರೀತಿಯನ್ನಿಟ್ಟಿದ್ದೇವೆ.</verse>
				<verse number="3">ಪಿತನಾದ ದೇವರಿಂದಲೂ ಅವರ ಪುತ್ರ ಯೇಸುಕ್ರಿಸ್ತರಿಂದಲೂ ಕೃಪೆ, ಕರುಣೆ, ಶಾಂತಿ, ಸಮಾಧಾನಗಳು ಸತ್ಯಪೂರ್ವಕವಾಗಿಯೂ ಪ್ರೀತಿಪೂರ್ವಕವಾಗಿಯೂ ನಮ್ಮಲ್ಲಿ ನೆಲೆಸಲಿ!</verse>
				<verse number="4">ನಿನ್ನ ಮಕ್ಕಳಲ್ಲಿ ಕೆಲವರು ಪಿತನು ವಿಧಿಸಿದಂತೆ ಸತ್ಯಸಂಧರಾಗಿ ನಡೆಯುವುದನ್ನು ಕಂಡು ನನಗಾದ ಆನಂದ ಅಷ್ಟಿಷ್ಟಲ್ಲ.</verse>
				<verse number="5">ಶ್ರೀಮಾತೆಯೇ, ನಾನು ಮಾಡುವ ಬಿನ್ನಹವಿದು: ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದು ಮೊತ್ತಮೊದಲಿನಿಂದಲೂ ನಮಗೆ ಕೊಡಲಾದ ಆಜ್ಞೆಯೇ ಹೊರತು ಹೊಸದೇನೂ ಅಲ್ಲ.</verse>
				<verse number="6">ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಪ್ರೀತಿ. ಪ್ರೀತಿಮಾರ್ಗದಲ್ಲಿ ನಡೆಯಬೇಕೆಂಬುದೇ ನೀವು ಮೊತ್ತಮೊದಲಿನಿಂದಲೂ ಕೇಳಿರುವ ಆಜ್ಞೆ.</verse>
				<verse number="7">ಅನೇಕ ಮಂದಿ ವಂಚಕರು ಲೋಕದಲ್ಲಿ ತಲೆದೋರಿದ್ದಾರೆ. ಯೇಸುಕ್ರಿಸ್ತರು ಮನುಷ್ಯ ಆಗಿಬಂದರೆಂಬುದನ್ನು ಇವರು ಒಪ್ಪಿಕೊಳ್ಳುವುದಿಲ್ಲ. ಇಂಥವನು ವಂಚಕನೂ ಕ್ರಿಸ್ತವಿರೋಧಿಯೂ ಹೌದು.</verse>
				<verse number="8">ನಿಮ್ಮ ದುಡಿಮೆಯ ಫಲವನ್ನು ಕಳೆದುಕೊಳ್ಳದೆ ಅದನ್ನು ಪೂರ್ಣವಾಗಿ ಪಡೆಯುವಂತೆ ನೀವು ಎಚ್ಚರಿಕೆ ವಹಿಸಬೇಕು.</verse>
				<verse number="9">ಕ್ರಿಸ್ತಯೇಸುವಿನ ಉಪದೇಶದಲ್ಲಿ ನೆಲೆಸದೆ ಅದರ ಎಲ್ಲೆಮೀರಿ ನಡೆಯುವವನಲ್ಲಿ ದೇವರು ಇರುವುದಿಲ್ಲ. ಆ ಉಪದೇಶದಲ್ಲಿ ನೆಲೆಸಿರುವವನಲ್ಲಿ ಪಿತ ಮತ್ತು ಪುತ್ರ ಇಬ್ಬರೂ ಇರುತ್ತಾರೆ.</verse>
				<verse number="10">ಈ ಉಪದೇಶವನ್ನು ಒಪ್ಪದಿರುವ ಯಾವನಾದರೂ ನಿಮಗೆ ಉಪದೇಶಮಾಡಬಂದರೆ, ಮನೆಯೊಳಗೆ ಸೇರಿಸಬೇಡಿ; ಅವನನ್ನು ಹರಸಲೂಬೇಡಿ.</verse>
				<verse number="11">ಏಕೆಂದರೆ, ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.</verse>
				<verse number="12">ನಾನು ನಿಮಗೆ ತಿಳಿಸಬೇಕಾದ ವಿಷಯಗಳು ಬಹಳಷ್ಟಿವೆ. ಆದರೆ ಅವುಗಳನ್ನು ಕಾಗದಪತ್ರಗಳ ಮೂಲಕ ತಿಳಿಸಲು ನನಗೆ ಇಷ್ಟವಿಲ್ಲ. ನಾನೇ ನಿಮ್ಮಲ್ಲಿಗೆ ಬಂದು ನಿಮ್ಮ ಸಂಗಡ ಮಾತನಾಡುವ ನಿರೀಕ್ಷೆ ಇದೆ. ಹೀಗೆ ಮುಖಾಮುಖಿಯಾಗಿ ಮಾತನಾಡುವುದರಿಂದ ಪೂರ್ಣಸಂತೋಷವೂ ಆಗುತ್ತದೆ.</verse>
				<verse number="13">ದೇವರಿಂದ ಆಯ್ಕೆಯಾದ ನಿನ್ನ ಸಹೋದರಿಯ ಮಕ್ಕಳು ನಿನಗೆ ನಮಸ್ಕಾರ ಹೇಳಿದ್ದಾರೆ.</verse>
			</chapter>
		</book>
		<book number="64">
			<chapter number="1">
				<verse number="1">ಯಥಾರ್ಥ ಪ್ರೀತಿಗೆ ಪಾತ್ರನಾದ ಗಾಯನಿಗೆ - ಸಭೆಯ ಹಿರಿಯನಾದ ನಾನು ಬರೆಯುವ ಪತ್ರ:</verse>
				<verse number="2">ಪ್ರಿಯನೇ, ಎಲ್ಲಾ ವಿಷಯಗಳಲ್ಲಿ ನಿನಗೆ ಶುಭವನ್ನು ಕೋರುತ್ತೇನೆ; ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ. ಆತ್ಮದ ವಿಷಯದಲ್ಲಿ ನೀನು ಅಭಿವೃದ್ಧಿಗೊಳ್ಳುತ್ತಿರುವೆ ಎಂದು ನಂಬಿದ್ದೇನೆ.</verse>
				<verse number="3">ನೀನು ಸತ್ಯದಲ್ಲಿ ನಿಷ್ಠಾವಂತನಾಗಿದ್ದು, ಸನ್ಮಾರ್ಗದಲ್ಲಿ ನಡೆಯುತ್ತಿರುವುದಾಗಿ ಕೆಲವು ಸಹೋದರರು ಇಲ್ಲಿಗೆ ಬಂದು ತಿಳಿಸಿದಾಗ ನನಗಾದ ಆನಂದ ಅಷ್ಟಿಷ್ಟಲ್ಲ.</verse>
				<verse number="4">ನನ್ನ ಪ್ರಿಯಮಕ್ಕಳು ಸತ್ಯಸಂಧರಾಗಿ ನಡೆಯುತ್ತಿದ್ದಾರೆಂದು ಕೇಳುವುದಕ್ಕಿಂತ ಮಿಗಿಲಾದ ಆನಂದ ನನಗಿಲ್ಲ.</verse>
				<verse number="5">ಪ್ರಿಯನೇ, ಸಹೋದರರಿಗೆ - ಮುಖ್ಯವಾಗಿ ಅಪರಿಚಿತರಿಗೆ ಸತ್ಕಾರ್ಯವನ್ನು ಮಾಡುವುದರಲ್ಲಿ ನೀನು ತುಂಬಾ ನಿಷ್ಠಾವಂತನು.</verse>
				<verse number="6">ಇಲ್ಲಿಯ ಸಭೆಯ ಮುಂದೆ ಅವರೇ ನಿನ್ನ ಪ್ರೀತ್ಯಾದರವನ್ನು ಪ್ರಶಂಶಿಸಿದ್ದಾರೆ. ಅವರು ತಮ್ಮ ಸಂಚಾರವನ್ನು ಇನ್ನೂ ಮುಂದುವರಿಸುವಂತೆ ದೇವರು ಮೆಚ್ಚುವ ರೀತಿಯಲ್ಲಿ ನೀನು ನೆರವಾಗಬೇಕು.</verse>
				<verse number="7">ಅವರು ಈ ಸಂಚಾರವನ್ನು ಕೈಗೊಂಡಿರುವುದು ಕ್ರಿಸ್ತಯೇಸುವಿನ ಸೇವೆಗಾಗಿಯೆ. ಅನ್ಯಧರ್ಮೀಯರಿಂದ ಅವರು ಯಾವ ಸಹಾಯವನ್ನೂ ಸ್ವೀಕರಿಸುವವರಲ್ಲ. ಆದ್ದರಿಂದ, ಇಂಥವರಿಗೆ ನಾವು ನೆರವಾಗಲೇಬೇಕು.</verse>
				<verse number="8">ಹೀಗೆ ಸತ್ಯಕ್ಕಾಗಿ ದುಡಿಯುವವರೊಂದಿಗೆ ನಾವು ಸಹಕರಿಸಬೇಕು.</verse>
				<verse number="9">ನಾನು ನಿಮ್ಮ ಸಭೆಗೆ ಚಿಕ್ಕ ಪತ್ರವೊಂದನ್ನು ಬರೆದಿದ್ದೇನೆ. ಆದರೆ ಅಲ್ಲಿಯ ಸಭೆಗೆ ಮುಖಂಡನಾಗ ಬಯಸುತ್ತಿರುವ ದಿಯೊತ್ರೇಫನು ನನ್ನ ಮಾತನ್ನು ಗೌರವಿಸುತ್ತಿಲ್ಲ.</verse>
				<verse number="10">ನಾನು ಬಂದಾಗ, ಅವನು ಮಾಡುತ್ತಿರುವುದನ್ನೆಲ್ಲಾ ಹೊರಗೆಡಹುತ್ತೇನೆ. ನಮ್ಮ ವಿರುದ್ಧ ಅವನು ಅಪಪ್ರಚಾರ ಮಾಡುತ್ತಾ ಹರಟೆಕೊಚ್ಚುತ್ತಿದ್ದಾನೆ. ಸಾಲದೆಂದು, ಸಹೋದರರನ್ನು ಸ್ವಾಗತಿಸಲು ನಿರಾಕರಿಸುತ್ತಿದ್ದಾನೆ. ಹಾಗೆ ಸ್ವಾಗತಿಸಬಯಸುವವರನ್ನು ನಿರ್ಬಂಧಿಸಿ ಸಭೆಯಿಂದ ಬಹಿಷ್ಕರಿಸುತ್ತಿದ್ದಾನೆ.</verse>
				<verse number="11">ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನೇ ಅನುಸರಿಸಿ ನಡೆ. ಒಳಿತನ್ನು ಮಾಡುವವನು ದೇವರಿಗೆ ಸೇರಿದವನು. ಕೆಡುಕನ್ನು ಮಾಡುವವನು ದೇವರನ್ನು ಕಾಣದವನು.</verse>
				<verse number="12">ದೆಮೇತ್ರಿಯನ ವಿಷಯದಲ್ಲಿ ಎಲ್ಲರೂ ಒಳ್ಳೆಯದನ್ನೇ ಹೇಳುತ್ತಾರೆ. ಸತ್ಯವೂ ಅವನ ಪರವಾಗಿದೆ. ನಾವು ಅವನ ಬಗ್ಗೆ ಸಾಕ್ಷಿ ಹೇಳಬಲ್ಲೆವು. ನಮ್ಮ ಸಾಕ್ಷ್ಯ ಸತ್ಯವೆಂದು ನೀನು ಬಲ್ಲೆ.</verse>
				<verse number="13">ನಾನು ನಿನಗೆ ತಿಳಿಸಬೇಕಾದುದು ಇನ್ನೂ ಎಷ್ಟೋ ಇದೆ. ಕಾಗದಪತ್ರಗಳ ಮೂಲಕ ತಿಳಿಸಲು ನನಗಿಷ್ಟವಿಲ್ಲ.</verse>
				<verse number="14">ಸದ್ಯದಲ್ಲೇ ನಿನ್ನನ್ನು ಕಾಣುವ ನಿರೀಕ್ಷೆ ನನಗಿದೆ. ಆಗ ನಾವು ಮುಖಾಮುಖಿಯಾಗಿ ಮಾತಾಡಬಹುದು.</verse>
				<verse number="15">ಶಾಂತಿಸಮಾಧಾನ ನಿನ್ನಲ್ಲಿರಲಿ! ಮಿತ್ರರೆಲ್ಲರೂ ನಿನಗೆ ವಂದನೆ ಹೇಳಿದ್ದಾರೆ. ಅಲ್ಲಿರುವ ಪ್ರತಿಯೊಬ್ಬ ಮಿತ್ರನಿಗೂ ನಮ್ಮ ವಂದನೆಗಳನ್ನು ತಿಳಿಸು.</verse>
			</chapter>
		</book>
		<book number="65">
			<chapter number="1">
				<verse number="1">ಪಿತನಾದ ದೇವರ ಪ್ರೀತಿಯಲ್ಲೂ ಯೇಸುಕ್ರಿಸ್ತರ ಆಶ್ರಯದಲ್ಲೂ ಬಾಳುತ್ತಿರುವ ಭಕ್ತರಿಗೆ - ಯೇಸುಕ್ರಿಸ್ತರ ದಾಸನೂ ಯಕೋಬನ ಸಹೋದರನೂ ಆದ ಯೂದನು ಬರೆಯುವ ಪತ್ರ.</verse>
				<verse number="2">ದೇವರಿಂದ ಕರೆಹೊಂದಿರುವ ನಿಮಗೆ ಕರುಣೆಯೂ ಶಾಂತಿಯೂ ಪ್ರೀತಿಯೂ ಸಮೃದ್ಧಿಯಾಗಿ ಲಭಿಸಲಿ!</verse>
				<verse number="3">ಪ್ರಿಯ ಸಹೋದರರೇ, ನಮ್ಮೆಲ್ಲರಿಗೂ ಲಭಿಸಿರುವ ಜೀವೋದ್ಧಾರವನ್ನು ಕುರಿತು ಬರೆಯಲು ಅತ್ಯಾಸಕ್ತನಾಗಿದ್ದೆನು. ಆದರೆ, ದೇವಜನರಿಗೆ ಒಮ್ಮೆಗೇ ಶಾಶ್ವತವಾಗಿ ಕೊಡಲಾಗಿರುವ ವಿಶ್ವಾಸವನ್ನು ಕಾಪಾಡಿಕೊಳ್ಳುವುದಕ್ಕಾಗಿ ಹೋರಾಡಬೇಕೆಂದು ನಿಮ್ಮನ್ನು ಪ್ರೋತ್ಸಾಹಿಸಿ ಬರೆಯುವುದು ಅವಶ್ಯವೆಂದು ತೋರಿತು.</verse>
				<verse number="4">ಏಕೆಂದರೆ, ಕೆಲವರು ಕಳ್ಳತನದಿಂದ ನಿಮ್ಮ ಸಭೆಯೊಳಗೆ ಸೇರಿಕೊಂಡಿದ್ದಾರೆ. ಇವರು ಭಕ್ತಿಹೀನರು; ನಮ್ಮ ದೇವರ ಅನುಗ್ರಹದ ನೆವದಲ್ಲಿ ತಮ್ಮ ಕಾಮಾಭಿಲಾಷೆಗಳನ್ನು ಸಮರ್ಥಿಸಿಕೊಳ್ಳುತ್ತಿರುವವರು; ನಮ್ಮ ಏಕೈಕ ಒಡೆಯರೂ ಪ್ರಭುವೂ ಆದ ಯೇಸುಕ್ರಿಸ್ತರನ್ನು ನಿರಾಕರಿಸುವವರು. ಇಂಥವರಿಗೆ ದಂಡನೆಯಾಗಬೇಕೆಂದು ಬಹಳ ಹಿಂದೆಯೇ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.</verse>
				<verse number="5">ಇದನ್ನೆಲ್ಲಾ ನೀವು ಈಗಾಗಲೇ ಚೆನ್ನಾಗಿ ಅರಿತವರಾಗಿದ್ದೀರಿ. ಆದರೂ ಕೆಲವು ವಿಷಯಗಳನ್ನು ನಿಮ್ಮ ನೆನಪಿಗೆ ತರಲು ಬಯಸುತ್ತೇನೆ: ದೇವರು ತಮ್ಮ ಪ್ರಜೆಗಳನ್ನು ಈಜಿಪ್ಟ್ ದೇಶದಿಂದ ಬಿಡುಗಡೆಮಾಡಿದರು; ವಿಶ್ವಾಸವಿಡದವರನ್ನು ಅನಂತರ ಅವರೇ ನಾಶಮಾಡಿದರು.</verse>
				<verse number="6">ಅಂತೆಯೇ, ತಮ್ಮ ಆದ್ಯ ಅಂತಸ್ತನ್ನು ಉಳಿಸಿಕೊಳ್ಳದೆ, ತಮ್ಮ ಯೋಗ್ಯ ನಿವಾಸವನ್ನು ಕಳೆದುಕೊಂಡ ದೇವದೂತರನ್ನು ಶಾಶ್ವತ ಸಂಕಲೆಗಳಿಂದ ಬಂಧಿಸಲಾಯಿತು; ಮಹಾದಿನದಲ್ಲಿ ಸಂಭವಿಸುವ ದಂಡನೆಯ ತೀರ್ಪಿಗಾಗಿ ಅವರನ್ನು ಕಾರ್ಗತ್ತಲೆಯಲ್ಲಿ ಕೂಡಿಡಲಾಯಿತು.</verse>
				<verse number="7">ಸೊದೋಮ್, ಗೊಮೋರ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಿಗರು ಆ ದೂತರಂತೆಯೇ ನಡೆದುಕೊಂಡರು. ಅಲ್ಲದೆ, ಅವರು ಅನೈತಿಕತೆಯಲ್ಲೂ ಪ್ರಕೃತಿ ವಿರುದ್ಧವಾದ ಲೈಂಗಿಕಕೃತ್ಯಗಳಲ್ಲೂ ಮಗ್ನರಾಗಿದ್ದರು. ಈ ಕಾರಣದಿಂದ ಅವರು ನಿತ್ಯಾಗ್ನಿಯ ಶಿಕ್ಷೆಗೆ ಗುರಿಯಾಗಿ ಇತರರಿಗೆ ಎಚ್ಚರಿಕೆಯನ್ನು ನೀಡುವ ನಿದರ್ಶನವಾಗಿದ್ದಾರೆ.</verse>
				<verse number="8">ಈ ದುರ್ಬೋಧಕರು ಕೂಡ ಹಾಗೆಯೇ ವರ್ತಿಸುತ್ತಾರೆ. ಕನಸು ಕಾಣುವವರಂತೆ ತಮ್ಮ ಶರೀರವನ್ನು ಪಾಪಕಳಂಕದಿಂದ ಮಲಿನವಾಗಿಸಿಕೊಳ್ಳುತ್ತಾರೆ. ಪ್ರಭುವಿನ ಅಧಿಕಾರವನ್ನು ಅಸಡ್ಡೆಮಾಡುತ್ತಾರೆ. ಸ್ವರ್ಗನಿವಾಸಿಗಳನ್ನು ದೂಷಿಸುತ್ತಾರೆ.</verse>
				<verse number="9">ಪ್ರಧಾನ ದೇವದೂತ ಮಿಕಾಯೇಲನೂ ಇಂಥ ದೂಷಣೆಯನ್ನು ಆಡಲಿಲ್ಲ. ಮೋಶೆಯ ಪಾರ್ಥಿವ ಶರೀರದ ವಿಷಯದಲ್ಲಿ ಸೈತಾನನೊಡನೆ ವಾಗ್ವಾದ ಮಾಡಿದಾಗಲೂ ಅಂಥ ದೂಷಣೆಯನ್ನು ಆಡಲು ಧೈರ್ಯಗೊಳ್ಳದೆ, “ಸರ್ವೇಶ್ವರ ನಿನ್ನನ್ನು ಖಂಡಿಸಲಿ,” ಎಂದಷ್ಟೇ ಹೇಳಿದನು.</verse>
				<verse number="10">ಆದರೆ, ಈ ಜನರು ತಮಗೆ ಅರ್ಥವಾಗದ ಎಲ್ಲವನ್ನೂ ದೂಷಿಸುತ್ತಾರೆ. ವಿಚಾರ ಶೂನ್ಯ ಪ್ರಾಣಿಗಳಂತೆ ಸಹಜ ಪ್ರವೃತ್ತಿಯಿಂದ ಏನನ್ನು ತಿಳಿದುಕೊಳ್ಳುತ್ತಾರೋ ಅದರಿಂದಲೇ ನಾಶವಾಗುತ್ತಾರೆ.</verse>
				<verse number="11">ಇವರ ದುರ್ಗತಿ ಭಯಂಕರವಾದುದು! ಇವರು ಕಾಯಿನನ ಮಾರ್ಗವನ್ನು ಹಿಡಿದಿದ್ದಾರೆ; ಲಾಭಕೋರರಾಗಿ ಬಿಳಾಮನ ಭ್ರಾಂತಿಯಲ್ಲಿ ಬೀಳಹೋಗುತ್ತಾರೆ; ಕೋರಹನಂತೆ ದಂಗೆ ಎದ್ದು ವಿನಾಶವಾಗುತ್ತಿದ್ದಾರೆ.</verse>
				<verse number="12">ತಮ್ಮ ಮಿತಿಮೀರಿದ ಮದ್ಯಪಾನಾಸಕ್ತಿಯಿಂದ ನಿಮ್ಮ ಪ್ರೇಮಭೋಜನ ಕೂಟಗಳಲ್ಲಿ ಇವರು ಕಳಂಕಪ್ರಾಯರಾಗಿದ್ದಾರೆ. ತಮ್ಮ ಕುರಿಗಳನ್ನು ತೊರೆದು ಹೊಟ್ಟೆಹೊರೆದುಕೊಳ್ಳುವ ಕುರುಬರಂತಿದ್ದಾರೆ. ಇವರು ಬಿರುಗಾಳಿಗೆ ಚದುರಿಹೋಗುವ ನೀರಿಲ್ಲದ ಮೋಡಗಳು; ಎಲೆಗಳು ಉದುರಿ, ಫಲಬಿಡದೆ, ಬಾಡಿಹೋಗಿ, ಬೇರುಸಹಿತ ಕಿತ್ತುಬೀಳುವ ಶರತ್ಕಾಲದ ಮರಗಳು;</verse>
				<verse number="13">ತಮ್ಮ ನಾಚಿಕೆಗೇಡಿತನದ ನೊರೆಯನ್ನು ಕಾರುವ ಸಾಗರದ ಹುಚ್ಚು ತೆರೆಗಳು; ದಿಕ್ಕುಗೆಟ್ಟ ತಾರೆಗಳಿವರು. ಇವರಿಗಾಗಿ ಕಾದಿದೆ ನಿರಂತರ ಕಾರ್ಗತ್ತಲಿನ ಕಂದಕ.</verse>
				<verse number="14">ಇವರ ವಿಷಯವಾಗಿ ಆದಾಮನ ಏಳನೆಯ ತಲೆಮಾರಿನ ಹನೋಕನು, “ಇಗೋ, ಸರ್ವೇಶ್ವರ ತಮ್ಮ ಅಸಂಖ್ಯಾತ ಪರಿಶುದ್ಧ ದೂತರ ಸಮೇತ ಆಗಮಿಸುವರು. ಎಲ್ಲರಿಗೂ ನ್ಯಾಯತೀರ್ಪು ಕೊಡುವರು.</verse>
				<verse number="15">ಭಕ್ತಿಹೀನರು ತಮಗೆ ವಿರುದ್ಧ ಮಾಡಿದ ಎಲ್ಲಾ ದುಷ್ಕೃತ್ಯಗಳನ್ನು ಮತ್ತು ಪಾಪಿಷ್ಠರು ತಮಗೆ ವಿರುದ್ಧವಾಗಿ ಆಡಿದ ಎಲ್ಲಾ ದೂಷಣೆಗಳನ್ನು ಖಂಡಿಸಲು ಬರುವರು,” ಎಂದು ಪ್ರವಾದಿಸಿದ್ದಾನೆ.</verse>
				<verse number="16">ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.</verse>
				<verse number="17">ಪ್ರಿಯರೇ, ನಮ್ಮ ಪ್ರಭುವಾದ ಕ್ರಿಸ್ತಯೇಸುವಿನ ಪ್ರೇಷಿತರು. ನಿಮಗೆ ಮುಂಚಿತವಾಗಿ ತಿಳಿಸಿದ ಮಾತುಗಳನ್ನು ನೆನಪುಮಾಡಿಕೊಳ್ಳಿ.</verse>
				<verse number="18">“ತಮ್ಮ ದುರಿಚ್ಛೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಬರುವರು,” ಎಂದು ಅವರು ಎಚ್ಚರಿಸಿದ್ದಾರೆ.</verse>
				<verse number="19">ಇವರು ನಿಮ್ಮಲ್ಲಿ ಭಿನ್ನಭೇದವನ್ನು ಉಂಟುಮಾಡುವವರು, ಪ್ರಾಪಂಚಿಕ ವಿಷಯಾಸಕ್ತರು; ಪವಿತ್ರಾತ್ಮರಹಿತರಾಗಿ ಬಾಳುವವರು.</verse>
				<verse number="20">ಪ್ರಿಯರೇ, ನೀವಾದರೋ ಅತಿ ಪರಿಶುದ್ಧ ವಿಶ್ವಾಸದ ಆಧಾರದ ಮೇಲೆ ನಿರ್ಮಿಸಲಾದ ಮಂದಿರದಂತೆ ಪ್ರವರ್ಧಿಸಿರಿ; ಪವಿತ್ರಾತ್ಮ ಅವರಿಂದ ಪ್ರೇರಿತರಾಗಿ ಪ್ರಾರ್ಥಿಸಿರಿ.</verse>
				<verse number="21">ನಿತ್ಯಜೀವವನ್ನು ದಯಪಾಲಿಸುವ ಕರುಣಾಮಯ ಪ್ರಭು ಯೇಸುಕ್ರಿಸ್ತರನ್ನು ಎದುರುನೋಡುತ್ತಾ ದೇವರ ಪ್ರೀತಿಯಲ್ಲಿ ನೆಲೆಗೊಂಡಿರಿ.</verse>
				<verse number="22">ಸಂಶಯಪಡುವವರಿಗೆ ಸಹೃದಯದಿಂದ ನೆರವಾಗಿರಿ.</verse>
				<verse number="23">ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ. ಕೆಲವರಿಗೆ ದಯೆತೋರಿಸುವಾಗ ಭಯವಿರಲಿ. ಪಾಪದ ನಡತೆಯಿಂದ ಹೊಲಸಾದ ಅವರ ಬಟ್ಟೆಬರೆಗಳನ್ನೂ ಮುಟ್ಟದಿರಿ.</verse>
				<verse number="24">ಪಾಪದಲ್ಲಿ ಎಡವಿ ಬೀಳದಂತೆ ನಿಮ್ಮನ್ನು ಕಾಪಾಡುವ ತಮ್ಮ ಮಹಿಮಾಸನ್ನಿಧಿಯಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿಯೂ ಹರ್ಷಭರಿತರನ್ನಾಗಿಯೂ ನಿಲ್ಲಿಸಲು ಶಕ್ತರಾಗಿರುವ</verse>
				<verse number="25">ನಮ್ಮ ಉದ್ಧಾರಕರಾದ ಏಕೈಕ ದೇವರಿಗೆ ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಅಧಿಪತ್ಯ, ಅಧಿಕಾರ ಆದಿಯಲ್ಲಿ ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲಿ! ಆಮೆನ್.</verse>
			</chapter>
		</book>
		<book number="66">
			<chapter number="1">
				<verse number="1">ದೇವರು ಯೇಸುಕ್ರಿಸ್ತರಿಗಿತ್ತ ಪ್ರಕಟನೆ ಇದು. ಅತಿ ಶೀಘ್ರದಲ್ಲಿಯೇ ಸಂಭವಿಸಲಿರುವ ಘಟನೆಗಳನ್ನು ತಮ್ಮ ದಾಸರಿಗೆ ತಿಳಿಯಪಡಿಸುವುದಕ್ಕಾಗಿ ಕ್ರಿಸ್ತಯೇಸುವಿಗೆ ಈ ಪ್ರಕಟನೆಯನ್ನು ದೇವರು ದಯಪಾಲಿಸಿದರು. ಕ್ರಿಸ್ತಯೇಸು ತಮ್ಮ ದೂತನನ್ನು ಕಳುಹಿಸಿ ತಮ್ಮ ದಾಸನಾದ ಯೊವಾನ್ನನಿಗೆ ಇವುಗಳನ್ನು ಪ್ರಕಟಿಸಿದರು.</verse>
				<verse number="2">ಯೊವಾನ್ನನು ದೇವರ ಸಂದೇಶಕ್ಕೂ ಕ್ರಿಸ್ತೇಸು ತಿಳಿಸಿದ ಸತ್ಯಕ್ಕೂ ಸಾಕ್ಷಾತ್ ಸಾಕ್ಷಿಯಾಗಿದ್ದಾನೆ.</verse>
				<verse number="3">ಈ ಪ್ರವಾದನಾ ಸಂದೇಶವನ್ನು ಓದುವವನು ಧನ್ಯನು: ಓದಿದ್ದನ್ನು ಕೇಳಿಸಿಕೊಳ್ಳುವವರೂ ಧನ್ಯರು ಮತ್ತು ಈ ಪ್ರವಾದನೆಯಲ್ಲಿ ಲಿಖಿತವಾಗಿರುವುದನ್ನು ಕೈಗೊಂಡು ನಡೆಯುವವರು ಸಹ ಧನ್ಯರು! ಏಕೆಂದರೆ, ಕಾಲ ಸನ್ನಿಹಿತವಾಯಿತು.</verse>
				<verse number="4">ಏಷ್ಯಾಸೀಮೆಯಲ್ಲಿರುವ ಏಳು ಸಭೆಗಳಿಗೆ ಯೊವಾನ್ನನೆಂಬ ನಾನು ಬರೆಯುವುದೇನೆಂದರೆ: ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,’ ಭವಿಷ್ಯತ್‍ಕಾಲದಲ್ಲಿ ‘ಬರುವಾತನೂ’ ಆದ ದೇವರಿಂದ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ಇದಲ್ಲದೆ, ದೇವರ ಸಿಂಹಾಸನದ ಸಾನ್ನಿಧ್ಯದಲ್ಲಿ ಇರುವ ಸಪ್ತ ಆತ್ಮಗಳಿಂದಲು ಮತ್ತು</verse>
				<verse number="5">ನಂಬಲರ್ಹವಾದ ಸಾಕ್ಷಿಯೂ ಮೃತ್ಯುವಿನಿಂದ ಪುನರುತ್ಥಾನ ಹೊಂದಿದವರಲ್ಲಿ ಪ್ರಪ್ರಥಮರೂ ಭೂರಾಜರ ಒಡೆಯರೂ ಆದ ಯೇಸುಕ್ರಿಸ್ತರಿಂದಲೂ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದಿಂದ ನಮ್ಮ ಪಾಪಗಳನ್ನು ತೊಳೆದವರೂ</verse>
				<verse number="6">ತಮ್ಮ ಪಿತನಾದ ದೇವರ ಸೇವೆಗೆ ನಮ್ಮನ್ನು ದೈವೀರಾಜ್ಯದ ಯಾಜಕರನ್ನಾಗಿ ಮಾಡಿದವರೂ ಆದ ಯೇಸುಕ್ರಿಸ್ತರಿಗೆ ಮಹಿಮೆ ಮತ್ತು ಅಧಿಪತ್ಯ ಯುಗಯುಗಾಂತರಕ್ಕೂ ಸಲ್ಲಲಿ! ಆಮೆನ್.</verse>
				<verse number="7">ಇಗೋ ನೋಡು, ಮೇಘಾರೂಢನಾಗಿ ಬರುತಿಹನು ಪ್ರತಿಯೊಂದು ಕಣ್ಣೂ ಕಾಣುವುದು ಆತನನು, ಆತನನ್ನು ಇರಿದವರೂ ವೀಕ್ಷಿಸುವರು, ಗೋಳಾಡುವರಾತನನ್ನು ಕಂಡು ಲೋಕದ ಜನರೆಲ್ಲರು. ಹೌದು, ಅದರಂತೆಯೇ ಆಗುವುದು, ಆಮೆನ್.</verse>
				<verse number="8">“ ‘ಅ'ಕಾರವೂ ‘ಳ'ಕಾರವೂ ನಾನೇ. ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,” ಭವಿಷ್ಯತ್ಕಾಲದಲ್ಲಿ ‘ಬರುವಾತನೂ’ ಸರ್ವಶಕ್ತನೂ ನಾನೇ” ಎಂದು ಪ್ರಭು ದೇವರು ನುಡಿಯುತ್ತಾರೆ.</verse>
				<verse number="9">ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.</verse>
				<verse number="10">ಪ್ರಭುವಿನ ದಿನದಂದು ನಾನು ದೇವರಾತ್ಮ ವಶನಾದೆ. ಆಗ ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತೂರಿಯ ನಾದದಂತಿತ್ತು.</verse>
				<verse number="11">ಅದು ಹೀಗೆಂದು ನುಡಿಯಿತು: “ನೀನು ಕಾಣುತ್ತಿರುವುದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಪಟ್ಟಣಗಳಲ್ಲಿರುವ ಏಳು ಸಭೆಗಳಿಗೆ ಕಳುಹಿಸು.”</verse>
				<verse number="12">ನನ್ನ ಸಂಗಡ ಮಾತನಾಡುತ್ತಿರುವ ಈ ಶಬ್ದ ಯಾರದೆಂದು ನೋಡಲು ನಾನು ಹಿಂದಕ್ಕೆ ತಿರುಗಿದೆ. ಹಾಗೆ ತಿರುಗಿದಾಗ, ಏಳು ಚಿನ್ನದ ದೀಪಸ್ತಂಭಗಳನ್ನು ಕಂಡೆ.</verse>
				<verse number="13">ಆ ದೀಪಸ್ತಂಭಗಳ ನಡುವೆ ‘ನರಪುತ್ರ'ನಂಥ ಒಬ್ಬ ವ್ಯಕ್ತಿಯಿದ್ದರು. ಅವರು ನಿಲುವಂಗಿಯನ್ನು ತೊಟ್ಟಿದ್ದರು. ಅದು ಅವರ ಪಾದಗಳನ್ನು ಮುಟ್ಟುವಷ್ಟು ನೀಳವಾಗಿತ್ತು. ಅಲ್ಲದೆ, ಚಿನ್ನದ ಎದೆಪಟ್ಟಿಯನ್ನು ಕಟ್ಟಿಕೊಂಡಿದ್ದರು.</verse>
				<verse number="14">ಅವರ ತಲೆಗೂದಲು ಹಿಮದಂತೆಯೂ ಬಿಳಿಯ ಉಣ್ಣೆಯಂತೆಯೂ ಬಿಳುಪಾಗಿತ್ತು. ಕಣ್ಣುಗಳು ಪ್ರಜ್ವಲಿಸುವ ಬೆಂಕಿಯ ಕೆಂಡದಂತಿದ್ದವು.</verse>
				<verse number="15">ಅವರ ಪಾದಗಳು ಕುಲುಮೆಯಲ್ಲಿ ಕಾಯಿಸಿದ ತಾಮ್ರದಂತೆ ಥಳಥಳಿಸುತ್ತಾ ಇದ್ದವು. ಧ್ವನಿ, ಜಲಪಾತದಂತೆ ಭೋರ್ಗರೆಯುತ್ತಿತ್ತು.</verse>
				<verse number="16">ಅವರ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು. ಬಾಯೊಳಗಿಂದ ಹರಿತವಾದ ಇಬ್ಬಾಯಿಯ ಖಡ್ಗವು ಹೊರಬಂದಿತ್ತು. ಅವರ ಮುಖ ನಡುಮಧ್ಯಾಹ್ನದ ಸೂರ್ಯನಂತೆ ಪ್ರಕಾಶಿಸುತ್ತಿತ್ತು.</verse>
				<verse number="17">ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ</verse>
				<verse number="18">ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.</verse>
				<verse number="19">ಆದುದರಿಂದ ನೀನು ಕಂಡ ಘಟನೆಗಳನ್ನು ಅಂದರೆ, ಈಗ ನಡೆಯುತ್ತಿರುವ ಘಟನೆಗಳನ್ನೂ ಮುಂದೆ ಸಂಭವಿಸಲಿರುವ ಘಟನೆಗಳನ್ನೂ ಕುರಿತು ಬರೆ.</verse>
				<verse number="20">ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯವಿಷ್ಟೆ: ಆ ಏಳು ನಕ್ಷತ್ರಗಳು ಏಳು ಸಭೆಗಳ ದೂತರನ್ನು ಸೂಚಿಸುತ್ತವೆ. ಆ ಏಳು ಚಿನ್ನದ ದೀಪಸ್ತಂಭಗಳು ಏಳು ಸಭೆಗಳನ್ನು ಸೂಚಿಸುತ್ತವೆ,” ಎಂದರು.</verse>
			</chapter>
			<chapter number="2">
				<verse number="1">“ಎಫೆಸದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದಿರುವಾತನೂ ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವಾತನೂ ನೀಡುವ ಸಂದೇಶವಿದು:</verse>
				<verse number="2">ನಾನು ನಿನ್ನ ಸುಕೃತ್ಯಗಳನ್ನು ಬಲ್ಲೆ. ನಿನ್ನ ಶ್ರಮಜೀವನವನ್ನು ಅರಿತು ಇದ್ದೇನೆ. ನಿನ್ನ ಸಹನಾಶಕ್ತಿಯನ್ನು ಮನಗಂಡಿದ್ದೇನೆ. ದುರ್ಜನರನ್ನು ನೀನು ಸಹಿಸಲಾರೆ ಎಂಬುದು ನನಗೆ ಗೊತ್ತು. ಪ್ರೇಷಿತರಲ್ಲದಿದ್ದರೂ ಪ್ರೇಷಿತರೆಂದು ಹೇಳಿಕೊಳ್ಳುವವರನ್ನು ನೀನು ಪರಿಶೋಧಿಸಿರುವೆ. ಅವರು ಸುಳ್ಳುಗಾರರೆಂಬುದನ್ನು ಕಂಡುಹಿಡಿದಿರುವೆ.</verse>
				<verse number="3">ಹೌದು, ಸಹನಾಶಕ್ತಿ ನಿನಗಿದೆ. ಬೇಸರಗೊಳ್ಳದೆ ನನ್ನ ಹೆಸರಿನ ನಿಮಿತ್ತ ನೀನು ಕಷ್ಟಸಂಕಟಗಳನ್ನು ತಾಳಿಕೊಂಡೆ.</verse>
				<verse number="4">ಆದರೂ ನಿನ್ನ ಮೇಲೆ ಹೊರಿಸಬೇಕಾದ ಆಪಾದನೆ ಒಂದಿದೆ: ಮೊದಲು ನಿನಗೆ ನನ್ನ ಮೇಲಿದ್ದ ಪ್ರೀತಿ ಈಗಿಲ್ಲ.</verse>
				<verse number="5">ಆದುದರಿಂದ ನೀನು ಹೇಗೆ ಪತನಹೊಂದಿದೆ ಎಂಬುದನ್ನು ಜ್ಞಾಪಿಸಿಕೋ. ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಮೊದಲು ಮಾಡಿದ ಸುಕೃತ್ಯಗಳನ್ನು ಸಾಧಿಸು. ನೀನು ಪಾಪಕ್ಕೆ ವಿಮುಖನಾಗದೆಹೋದರೆ, ನಾನು ನಿನ್ನ ಬಳಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುತ್ತೇನೆ.</verse>
				<verse number="6">ಆದರೆ ನಿನ್ನಲ್ಲಿ ಒಂದು ಒಳ್ಳೆಯ ಗುಣವಿದೆ. ನಾನು ದ್ವೇಷಿಸುವಂತೆ ನೀನು ಸಹ ನಿಕೊಲಾಯಿತರ ದುಷ್ಕೃತ್ಯಗಳನ್ನು ದ್ವೇಷಿಸುತ್ತಿರುವೆ.</verse>
				<verse number="7">ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಯಾರು ಜಯಹೊಂದುತ್ತಾನೋ ಅಂಥವನಿಗೆ ದೇವರ ಪರಂಧಾಮದಲ್ಲಿ ಇರುವ ಜೀವವೃಕ್ಷದ ಫಲವನ್ನು ಸವಿಯುವ ಸೌಭಾಗ್ಯವನ್ನು ನಾನು ಅನುಗ್ರಹಿಸುತ್ತೇನೆ.</verse>
				<verse number="8">“ಸ್ಮುರ್ನದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಮೊದಲನೆಯವನೂ ಕಡೆಯವನೂ, ಮೃತನಾದರೂ ಮೃತ್ಯುಂಜಯನಾದವನು ನೀಡುವ ಸಂದೇಶವಿದು:</verse>
				<verse number="9">ನಾನು ನಿನ್ನ ಕಷ್ಟಸಂಕಟಗಳನ್ನು ತಿಳಿದಿರುವಾತನು. ನಿನ್ನ ಬಡತನವನ್ನು ನಾನು ಬಲ್ಲೆ. ಆದರೆ ವಾಸ್ತವವಾಗಿ ನೀನು ಶ್ರೀಮಂತನೇ ಆಗಿರುವೆ. ಯೆಹೂದ್ಯರೆಂದು ಕೊಚ್ಚಿಕೊಳ್ಳುವವರು ನಿನ್ನನ್ನು ತೆಗಳುವುದು ನನಗೆ ತಿಳಿದಿದೆ. ಆದರೆ ಅವರು ಯೆಹೂದ್ಯರಲ್ಲ. ಸೈತಾನನ ಕೂಟದವರಾಗಿದ್ದಾರೆ.</verse>
				<verse number="10">ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.</verse>
				<verse number="11">ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆ ಎರಡನೆಯ ಮರಣದಿಂದ ಯಾವ ಕೇಡೂ ಸಂಭವಿಸದು.</verse>
				<verse number="12">“ಪೆರ್ಗಮದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಹರಿತವಾದ ಇಬ್ಬಾಯಿಯ ಖಡ್ಗವುಳ್ಳವನು ನೀಡುವ ಸಂದೇಶವಿದು:</verse>
				<verse number="13">ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.</verse>
				<verse number="14">ಇಷ್ಟಾದರೂ ನಿನ್ನ ವಿರುದ್ಧ ಹೇಳಬೇಕಾದ ಕೆಲವು ಆಪಾದನೆಗಳಿವೆ. ಬಿಳಾಮನ ದುರ್ಬೋಧನೆಯನ್ನು ಅವಲಂಬಿಸುವವರು ಕೆಲವರು ನಿನ್ನಲ್ಲಿ ಇದ್ದಾರೆ. ಈ ಬಿಳಾಮನೇ ಇಸ್ರಯೇಲ್ ಜನರು ಪಾಪದಲ್ಲಿ ಬೀಳುವಂತೆಮಾಡಲು ಬಾಲಾಕನನ್ನು ಪ್ರಚೋದಿಸಿದವನು. ಈ ಕಾರಣ, ಅವರು ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿಂದರು; ಲೈಂಗಿಕ ಅನೈತಿಕತೆಗೆ ತುತ್ತಾದರು.</verse>
				<verse number="15">ಅಂತೆಯೇ, ನಿಕೊಲಾಯಿತರ ಬೋಧನೆಯನ್ನು ಅವಲಂಬಿಸುವವರು ಸಹ ನಿನ್ನಲ್ಲಿದ್ದಾರೆ.</verse>
				<verse number="16">ಆದುದರಿಂದ ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ಇಲ್ಲದಿದ್ದರೆ, ಬೇಗನೆ ನಿನ್ನ ಬಳಿಗೆ ಬರುತ್ತೇನೆ. ಬಂದು ನನ್ನ ಬಾಯಲ್ಲಿರುವ ಖಡ್ಗದಿಂದ ಅವರೊಡನೆ ಕಾದಾಡುತ್ತೇನೆ.</verse>
				<verse number="17">“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದಿದವನಿಗೆ ಮರೆಯಾಗಿರುವ ಮನ್ನವನ್ನು ನಾನು ದಯಪಾಲಿಸುತ್ತೇನೆ. ಇದಲ್ಲದೆ, ಆತನಿಗೆ ಒಂದು ಬಿಳಿಯ ಕಲ್ಲನ್ನು ನಾನು ಕೊಡುತ್ತೇನೆ. ಆ ಕಲ್ಲಿನ ಮೇಲೆ ಒಂದು ಹೊಸ ಹೆಸರನ್ನು ಕೆತ್ತಲಾಗಿರುತ್ತದೆ. ಆ ಕಲ್ಲನ್ನು ಸ್ವೀಕರಿಸಿದವನಿಗೇ ಹೊರತು ಮತ್ಯಾರಿಗೂ ಆ ಹೆಸರು ತಿಳಿಯದು.</verse>
				<verse number="18">“ಥುವತೈರದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಪ್ರಜ್ವಲಿಸುವ ಬೆಂಕಿಯ ಕೆಂಡದಂಥ ಕಣ್ಣುಗಳುಳ್ಳವನೂ ತಾಮ್ರದಂತಿರುವ ಪಾದಗಳುಳ್ಳವನೂ ಆದ ದೇವಪುತ್ರನ ಸಂದೇಶವಿದು:</verse>
				<verse number="19">ನಿನ್ನ ಸುಕೃತ್ಯಗಳನ್ನು ನಾನು ಬಲ್ಲೆ. ನಿನ್ನ ಪ್ರೀತಿ ವಿಶ್ವಾಸಗಳು ನನಗೆ ತಿಳಿದಿವೆ. ನಿನ್ನ ಸೇವೆ ಸಹಿಷ್ಣುತೆಗಳನ್ನು ಮನಗಂಡಿದ್ದೇನೆ. ನಿನ್ನ ಇತ್ತೀಚಿನ ಕಾರ್ಯಗಳು ನಿನ್ನ ಹಿಂದಿನ ಕಾರ್ಯಗಳಿಗಿಂತಲೂ ಮೇಲಾದುವೆಂದು ನನಗೆ ಗೊತ್ತು.</verse>
				<verse number="20">ಆದರೂ ನಿನಗೆ ವಿರುದ್ಧವಾದ ಆಪಾದನೆ ಒಂದಿದೆ: ಈಜೆಬೆಲ್ ಎಂಬ ಸ್ತ್ರೀ ತಾನು ಪ್ರವಾದಿನಿಯೆಂದು ಹೇಳಿಕೊಂಡು ಮೆರೆಯುತ್ತಿದ್ದಾಳೆ. ಲೈಂಗಿಕ ಅನೈತಿಕತೆಯಲ್ಲಿ ತೊಡಗಬಹುದೆಂದೂ ವಿಗ್ರಹಗಳಿಗೆ ನೈವೇದ್ಯಮಾಡಿದ ಪದಾರ್ಥವನ್ನು ತಿನ್ನಬಹುದೆಂದೂ ಬೋಧಿಸುತ್ತಾ ನನ್ನ ಸೇವಕರನ್ನು ಅಡ್ಡದಾರಿಗೆ ಎಳೆಯುತ್ತಿದ್ದಾಳೆ. ಆದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವೆ.</verse>
				<verse number="21">ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖಳಾಗುವಂತೆ ನಾನು ಅವಳಿಗೆ ಕಾಲಾವಕಾಶ ಕೊಟ್ಟೆ. ಆದರೆ ಅವಳು ತನ್ನ ಜಾರತ್ವವನ್ನು ತ್ಯಜಿಸಿ ದೇವರಿಗೆ ಅಭಿಮುಖಳಾಗಲು ನಿರಾಕರಿಸುತ್ತಾಳೆ.</verse>
				<verse number="22">ಇಗೋ ನೋಡು, ಅವಳು ರೋಗದಿಂದ ಹಾಸಿಗೆ ಹಿಡಿಯುವಂತೆ ಮಾಡುತ್ತೇನೆ. ಅವಳೊಡನೆ ವ್ಯಭಿಚಾರ ಮಾಡುವವರು ಅವಳ ದುಷ್ಕೃತ್ಯಗಳನ್ನು ತ್ಯಜಿಸಿ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗದೆಹೋದರೆ, ಅವರು ಭೀಕರ ಕಷ್ಟನಷ್ಟಗಳಿಗೆ ಗುರಿಯಾಗುವಂತೆ ಮಾಡುತ್ತೇನೆ.</verse>
				<verse number="23">ಅವಳ ಮಕ್ಕಳನ್ನು ಸಂಹರಿಸದೆ ಬಿಡೆನು. ಹೃನ್ಮನಗಳನ್ನು ಪರಿಶೋಧಿಸುವಾತನು ನಾನೇ ಎಂದು ಎಲ್ಲ ಸಭೆಗಳಿಗೂ ಆಗ ಮನದಟ್ಟು ಆಗುವುದು; ನಿಮ್ಮಲ್ಲಿರುವ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನು ನೀಡುತ್ತೇನೆ.</verse>
				<verse number="24">“ಆದರೆ ಥುವತೈರದಲ್ಲಿರುವ ಇನ್ನಿತರರಿಗೆ ನಾನು ಹೇಳುವುದೇನೆಂದರೆ: ಈ ದುರ್ಬೋಧನೆಯನ್ನು ನೀವು ಅವಲಂಬಿಸಲಿಲ್ಲ. ‘ಸೈತಾನನ ಗೂಢ ರಹಸ್ಯಗಳು’ ಎನ್ನಲಾಗುವ ಈ ವಿಷಯಗಳನ್ನು ನೀವು ಅರಿತುಕೊಳ್ಳಲಿಲ್ಲ. ನಿಮ್ಮ ಮೇಲೆ ಹೆಚ್ಚಿನ ಹೊರೆಯನ್ನು ಹೊರಿಸುವುದಿಲ್ಲ.</verse>
				<verse number="25">ನಾನು ಬರುವವರೆಗೆ ನೀವು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿದ್ದರೆ ಅಷ್ಟೇ ಸಾಕು.</verse>
				<verse number="26">ನಾನು ನನ್ನ ಪಿತನಿಂದ ಅಧಿಕಾರ ಪಡೆದಿರುವಂತೆಯೇ, ಜಯಹೊಂದುವವನಿಗೆ ಹಾಗು ನಾನು ಮೆಚ್ಚುವ ಕಾರ್ಯಗಳನ್ನು ಕೊನೆಯವರೆಗೂ ಮುಂದುವರಿಸಿಕೊಂಡು ಹೋಗುವವನಿಗೆ, ‘ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು ಅವನು ಅವುಗಳನ್ನು ಕಬ್ಬಿಣದ ದಂಡದಿಂದ ಆಳುವನು ಮಣ್ಣಿನ ಮಡಕೆಯಂತೆ ಅವುಗಳನ್ನು ನುಚ್ಚುನೂರು ಮಾಡುವನು.’ ಅಂಥವನಿಗೆ ಉದಯ ತಾರೆಯನ್ನು ನೀಡುವೆನು.</verse>
				<verse number="27"></verse>
				<verse number="28"></verse>
				<verse number="29">“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”</verse>
			</chapter>
			<chapter number="3">
				<verse number="1">“ಸಾರ್ದಿಸ್‍ನಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ದೇವರ ಸಪ್ತ ಆತ್ಮಗಳನ್ನೂ ಸಪ್ತ ನಕ್ಷತ್ರಗಳನ್ನೂ ಹೊಂದಿರುವಾತನು ನೀಡುವ ಸಂದೇಶವಿದು: ನಿನ್ನ ಕೃತ್ಯಗಳನ್ನು ನೀನು ಬಲ್ಲೆ. ಹೆಸರಿಗೆ ಮಾತ್ರ ನೀನು ಜೀವಂತನಾಗಿರುವೆ. ಆದರೆ ವಾಸ್ತವವಾಗಿ ನೀನು ಸತ್ತಂತೆಯೇ ಸರಿ.</verse>
				<verse number="2">ಎಚ್ಚೆತ್ತು ನಿನ್ನಲ್ಲಿ ಉಳಿದಿರುವುಗಳನ್ನು ಉತ್ತೇಜನಗೊಳಿಸು; ಅವು ಸಾವಿನ ದವಡೆಯಲ್ಲಿವೆ. ನನ್ನ ದೇವರ ದೃಷ್ಟಿಯಲ್ಲಿ ನಿನ್ನ ಕೃತ್ಯಗಳು ಯಾವುವೂ ಸಮಗ್ರವಾಗಿರುವುದು ನನಗೆ ಕಂಡುಬಂದಿಲ್ಲ.</verse>
				<verse number="3">ನಿನಗೆ ಕೊಡಲಾದ ಬೋಧನೆಯನ್ನೂ ಅದನ್ನು ನೀನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೋ. ಅದರಂತೆ ನಡೆದು ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖನಾಗು. ನೀನು ಎಚ್ಚೆತ್ತುಕೊಳ್ಳದಿದ್ದರೆ ನಾನು ಕಳ್ಳನು ಬರುವಂತೆ ಬರುತ್ತೇನೆ. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಧಾಳಿಮಾಡುತ್ತೇನೆಂದೇ ನಿನಗೆ ತಿಳಿಯದು.</verse>
				<verse number="4">ಆದರೂ ತಮ್ಮ ಉಡುಪನ್ನು ಮಲಿನಮಾಡಿಕೊಳ್ಳದ ಕೆಲವರು ಸಾರ್ದಿಸಿನಲ್ಲಿ ಇದ್ದಾರೆ. ಅಂಥವರು ಯೋಗ್ಯರಾಗಿರುವುದರಿಂದ ಶ್ವೇತಾಂಬರರಾಗಿ ನನ್ನೊಡನೆ ನಡೆದಾಡುವರು.</verse>
				<verse number="5">ಜಯಹೊಂದುವವನು ಹೀಗೆ ಶ್ವೇತಾಂಬರನಾಗುವನು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಹಾಕುವುದಿಲ್ಲ. ನನ್ನ ಪಿತನ ಸಾನ್ನಿಧ್ಯದಲ್ಲಿಯೂ ಅವರ ದೂತರ ಮುಂದೆಯೂ ಅವನು ನನ್ನವನೆಂದು ನಾನು ಒಪ್ಪಿಕೊಳ್ಳುತ್ತೇನೆ.</verse>
				<verse number="6">“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”</verse>
				<verse number="7">“ಫಿಲದೆಲ್ಫಿಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಸತ್ಯವಂತನೂ ಪರಿಶುದ್ಧನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಮನೆತನದ ಬೀಗದ ಕೈ ನನ್ನಲ್ಲಿ ಇದೆ. ನಾನು ಬಾಗಿಲನ್ನು ತೆರೆದರೆ ಬೇರೆ ಯಾರೂ ಅದನ್ನು ಮುಚ್ಚಲಾಗದು. ನಾನು ಬಾಗಿಲನ್ನು ಮುಚ್ಚಿದರೆ ಬೇರೆ ಯಾರೂ ಅದನ್ನು ತೆರೆಯಲಾಗದು. ಈಗ ನಾನು ನಿನಗೆ ಹೇಳುವುದೇನೆಂದರೆ:</verse>
				<verse number="8">ನಾನು ನಿನ್ನ ಕೃತ್ಯಗಳನ್ನು ಬಲ್ಲೆ. ನಿನ್ನ ಎದುರಿನಲ್ಲಿ ಬಾಗಿಲೊಂದನ್ನು ತೆರೆದಿಟ್ಟಿದ್ದೇನೆ. ಅದನ್ನು ಮುಚ್ಚಲು ಯಾರಿಂದಲೂ ಸಾಧ್ಯವಾಗದು. ನಿನ್ನ ಶಕ್ತಿ ಅಲ್ಪವೆಂದು ನನಗೆ ಗೊತ್ತು. ಆದರೂ ನೀನು ನನ್ನನ್ನು ನಿರಾಕರಿಸದೆ ನನ್ನ ಉಪದೇಶವನ್ನು ಅನುಸರಿಸಿ ನಡೆದಿರುವೆ.</verse>
				<verse number="9">ತಾವು ಯೆಹೂದ್ಯರೆಂದು ಕೊಚ್ಚಿಕೊಳ್ಳುವ ‘ಸೈತಾನನ ಕೂಟಕ್ಕೆ’ ಸೇರಿದ ಕೆಲವರಿದ್ದಾರೆ. ಆದರೆ ಅವರು ವಾಸ್ತವವಾಗಿ ಯೆಹೂದ್ಯರಲ್ಲ; ಸುಳ್ಳುಗಾರರು. ಇಗೋ ನೋಡು, ಅವರು ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ಶರಣಾಗುವಂತೆ ಮಾಡುತ್ತೇನೆ. ನಿನ್ನ ಬಗ್ಗೆ ನನಗಿರುವ ಪ್ರೀತಿ ಅವರಿಗೆ ತಿಳಿಯುವಂತೆ ಮಾಡುತ್ತೇನೆ.</verse>
				<verse number="10">ಸೈರಣೆಯಿಂದಿರಬೇಕೆಂಬ ನನ್ನ ಉಪದೇಶವನ್ನು ನೀನು ಪಾಲಿಸಿದ್ದರಿಂದ ಭೂಲೋಕದ ನಿವಾಸಿಗಳೆಲ್ಲರನ್ನು ಪರಿಶೋಧಿಸಲೆಂದು ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ.</verse>
				<verse number="11">ನಾನು ಬೇಗನೆ ಬರುತ್ತೇನೆ. ನಿನ್ನ ಜಯಮಾಲೆಯನ್ನು ಯಾರೂ ಕಸಿದುಕೊಳ್ಳದಂತೆ ನೀನು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿರು.</verse>
				<verse number="12">ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.</verse>
				<verse number="13">“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”</verse>
				<verse number="14">“ಲವೊದಿಕೀಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ವಿಶ್ವಾಸಪಾತ್ರನೂ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲಾಧಾರನೂ ಆದ ‘ಆಮೆನ್’ ಎಂಬಾತನು ನೀಡುವ ಸಂದೇಶವಿದು:</verse>
				<verse number="15">ನಿನ್ನ ಕೃತ್ಯಗಳನ್ನು ನಾನು ಬಲ್ಲೆ. ನೀನು ತಣ್ಣಗೂ ಇಲ್ಲ, ಬಿಸಿಯಾಗೂ ಇಲ್ಲ. ನೀನು ತಣ್ಣಗಾಗಲಿ, ಬಿಸಿಯಾಗಲಿ ಇದ್ದಿದ್ದರೆ ಚೆನ್ನಾಗಿತ್ತು.</verse>
				<verse number="16">ನೀನು ತಣ್ಣಗೂ ಇಲ್ಲದೆ ಬಿಸಿಯಾಗೂ ಇಲ್ಲದೆ ಉಗುರು ಬೆಚ್ಚಗೆ ಇರುವುದರಿಂದ ನಾನು ನಿನ್ನನ್ನು ನನ್ನ ಬಾಯೊಳಗಿಂದ ಕಕ್ಕುತ್ತೇನೆ.</verse>
				<verse number="17">ನೀನು ನಿನ್ನ ವಿಷಯವಾಗಿ, ‘ನಾನು ಐಶ್ವರ್ಯವಂತನು, ಸಿರಿಸಂಪತ್ತುಳ್ಳವನು, ಯಾವ ಕೊರತೆಯೂ ಇಲ್ಲದವನು’ ಎಂದು ಹೇಳಿಕೊಳ್ಳುತ್ತಿರುವೆ. ಆದರೆ ನೀನು ನಿರ್ಭಾಗ್ಯನು, ದುರವಸ್ಥೆಯಲ್ಲಿರುವವನು, ದರಿದ್ರನು, ಕುರುಡನು ಮತ್ತು ಬಟ್ಟೆಬರೆಯಿಲ್ಲದೆ ಬೆತ್ತಲೆಯಾಗಿರುವವನು ಎಂಬುದು ನಿನಗೆ ತಿಳಿಯದು.</verse>
				<verse number="18">ಈಗ ನನ್ನ ಬುದ್ಧಿಮಾತುಗಳನ್ನು ಕೇಳು. ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟವಿಟ್ಟ ಚಿನ್ನವನ್ನು ನನ್ನಿಂದ ಕೊಂಡುಕೋ. ಲಜ್ಜಾಸ್ಪದವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಶ್ವೇತವಸ್ತ್ರಗಳನ್ನು ನನ್ನಿಂದ ಕ್ರಯಕ್ಕೆ ಕೊಂಡುಕೊಂಡು ಅವುಗಳನ್ನು ಧರಿಸಿಕೋ. ನಿನಗೆ ಕಣ್ಣು ಕಾಣಿಸುವಂತೆ ಲೇಪನವನ್ನು ನನ್ನಿಂದ ಬೆಲೆಗೆ ತೆಗೆದುಕೊಂಡು ನಿನ್ನ ಕಣ್ಣುಗಳಿಗೆ ಹಚ್ಚಿಕೋ.</verse>
				<verse number="19">ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು.</verse>
				<verse number="20">ಇಗೋ, ಬಾಗಿಲ ಬಳಿ ನಿಂತು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಸ್ವರವನ್ನು ಕೇಳಿಸಿಕೊಂಡು ಬಾಗಿಲನ್ನು ತೆರೆದರೆ ನಾನು ಮನೆಯೊಳಗೆ ಪ್ರವೇಶಿಸುತ್ತೇನೆ. ಅವನ ಸಂಗಡ ಊಟಮಾಡುತ್ತೇನೆ ಮತ್ತು ಅವನೂ ನನ್ನ ಸಂಗಡ ಊಟಮಾಡುತ್ತಾನೆ.</verse>
				<verse number="21">ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.</verse>
				<verse number="22">“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ!”</verse>
			</chapter>
			<chapter number="4">
				<verse number="1">ಇದಾದ ಬಳಿಕ ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದ ಬಾಗಿಲು ತೆರೆದಿತ್ತು. ಮೊದಲು ನನ್ನೊಡನೆ ಮಾತನಾಡಿದ ತುತೂರಿಯಂಥ ನಾದವು ನನಗೆ ಕೇಳಿಸಿತು. ಅದು, “ಮೇಲೆ ಬಾ, ಮುಂದೆ ಸಂಭವಿಸಲಿರುವ ಘಟನೆಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.</verse>
				<verse number="2">ಕೂಡಲೇ, ನಾನು ದೇವರಾತ್ಮವಶನಾದೆ. ಆಗ ಸ್ವರ್ಗದಲ್ಲಿ ಒಂದು ಸಿಂಹಾಸನ ಇರುವುದನ್ನೂ ಅದರಲ್ಲಿ ಒಬ್ಬರು ಆಸೀನರಾಗಿರುವುದನ್ನೂ ಕಂಡೆ.</verse>
				<verse number="3">ಅವರ ಮುಖ ಸೂರ್ಯಕಾಂತ ಮತ್ತು ಪದ್ಮರಾಗ ಹರಳುಗಳಂತೆ ಹೊಳೆಯುತ್ತಿತ್ತು. ಸಿಂಹಾಸನದ ಸುತ್ತಲೂ ಮರಕತದಂತೆ ಹೊಳೆಯುವ ಮುಗಿಲುಬಿಲ್ಲೊಂದು ಹೊಳೆಯುತ್ತಿತ್ತು.</verse>
				<verse number="4">ಈ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಪೀಠಗಳು ಇದ್ದವು. ಶ್ವೇತವಸ್ತ್ರಧಾರಿಗಳಾದ ಇಪ್ಪತ್ನಾಲ್ಕುಮಂದಿ ಸಭಾಪ್ರಮುಖರು ಆ ಪೀಠಗಳಲ್ಲಿ ಕುಳಿತಿದ್ದರು. ಅವರು ತಮ್ಮ ತಲೆಗಳ ಮೇಲೆ ಚಿನ್ನದ ಕಿರೀಟಗಳನ್ನು ಧರಿಸಿದ್ದರು.</verse>
				<verse number="5">ಸಿಂಹಾಸನದಿಂದ ಮಿಂಚು, ಗುಡುಗು, ಗರ್ಜನೆಗಳು ಹೊರಹೊಮ್ಮುತ್ತಿದ್ದವು. ಆ ಸಿಂಹಾಸನದ ಮುಂದೆ ದೇವರ ಸಪ್ತ ಆತ್ಮಗಳನ್ನು ಸೂಚಿಸುವ ಸಪ್ತದೀಪಗಳು ಬೆಳಗುತ್ತಿದ್ದವು.</verse>
				<verse number="6">ಇದಲ್ಲದೆ, ಸಿಂಹಾಸನದ ಮುಂದೆ ಸ್ಫಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಂಡುಬಂದಿತು. ಸಿಂಹಾಸನದ ಸುತ್ತಲೂ ಅದರ ನಾಲ್ಕು ಪಾರ್ಶ್ವಗಳಲ್ಲಿ ನಾಲ್ಕು ಜೀವಿಗಳು ಇದ್ದವು. ಅವುಗಳಿಗೆ ಮುಂದೆಯೂ ಹಿಂದೆಯೂ ಅನೇಕ ಕಣ್ಣುಗಳಿದ್ದವು.</verse>
				<verse number="7">ಮೊದಲನೆಯ ಜೀವಿ ಸಿಂಹದಂತೆ ಇತ್ತು. ಎರಡನೆಯ ಜೀವಿ ಹೋರಿಯಂತಿತ್ತು. ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು ಮತ್ತು ನಾಲ್ಕನೆಯ ಜೀವಿಯು ಹಾರುತ್ತಿರುವ ಗರುಡ ಪಕ್ಷಿಯಂತಿತ್ತು.</verse>
				<verse number="8">ಆ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಅವುಗಳ ಸುತ್ತಲು ಮತ್ತು ಒಳಗು ಅನೇಕ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳೂ: “ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು! ಸರ್ವಶಕ್ತರಾದ ಪ್ರಭು ದೇವರು ವರ್ತಮಾನಕಾಲದಲ್ಲಿ ಇರುವವರೂ ಭೂತಕಾಲದಲ್ಲಿ ಇದ್ದವರೂ ಭವಿಷ್ಯತ್‍ಕಾಲದಲ್ಲಿ ಬರುವವರೂ ಆಗಿದ್ದಾರೆ,” ಎಂದು ಹಾಡುತ್ತಿದ್ದವು.</verse>
				<verse number="9">ಯುಗಯುಗಾಂತರಕ್ಕೂ ಜೀವಿಸುವ ಹಾಗೂ ಸಿಂಹಾಸನಾರೂಢರಾಗಿರುವ ವ್ಯಕ್ತಿಗೆ ಆ ಜೀವಿಗಳು ಘನತೆ, ಗೌರವ ಮತ್ತು ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿದ್ದವು.</verse>
				<verse number="10">ಆ ಇಪ್ಪತ್ನಾಲ್ಕು ಸಭಾಪ್ರಮುಖರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸರ್ವಕಾಲಕ್ಕೂ ಜೀವಿಸುವ ಹಾಗೂ ಸಿಂಹಾಸನದಲ್ಲಿ ಆಸೀನರಾಗಿದ್ದ ವ್ಯಕ್ತಿಯ ಪಾದಗಳಿಗೆ ಅಡ್ಡಬಿದ್ದು ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಾ:</verse>
				<verse number="11">ನೀನೆಮ್ಮ ಪ್ರಭು ಹೇ ದೇವಾ, ಘನಮಾನ ಶಕ್ತಿಸನ್ಮಾನಗಳಿಗರ್ಹ, ಸಮಸ್ತವನು ನೀ ಸೃಷ್ಟಿಸಿದಾತ ಇರುವುದೆಲ್ಲವು ಜೀವಿಪುದೆಲ್ಲವು ನಿನ್ನ ಚಿತ್ತದಿಂದ,” ಎಂದು ಹಾಡುತ್ತಿದ್ದರು.</verse>
			</chapter>
			<chapter number="5">
				<verse number="1">ನಾನು ಈ ದೃಶ್ಯವನ್ನು ಸಹ ಕಂಡೆ: ಸಿಂಹಾಸನದಲ್ಲಿ ಆಸೀನರಾಗಿರುವವರ ಬಲಗೈಯಲ್ಲಿ ಒಂದು ಸುರುಳಿ ಇತ್ತು. ಅದರ ಒಳಭಾಗದಲ್ಲೂ ಹೊರಭಾಗದಲ್ಲೂ ಬರೆಯಲಾಗಿತ್ತು. ಅದನ್ನು ಏಳು ಮುದ್ರೆಗಳಿಂದ ಮುದ್ರಿಸಲಾಗಿತ್ತು.</verse>
				<verse number="2">ಬಲಿಷ್ಠ ದೇವದೂತನೊಬ್ಬನು ಮಹಾಶಬ್ದದಿಂದ, “ಈ ಮುದ್ರೆಗಳನ್ನು ಒಡೆದು ಸುರುಳಿಯನ್ನು ಬಿಚ್ಚಲು ಯೋಗ್ಯನು ಯಾರು?” ಎಂದು ಪ್ರಕಟಿಸಿದನು.</verse>
				<verse number="3">ಸ್ವರ್ಗದಲ್ಲಾಗಲಿ, ಭೂಮಿಯಲ್ಲಾಗಲಿ, ಪಾತಾಳದಲ್ಲಾಗಲಿ, ಆ ಸುರುಳಿಯನ್ನು ಬಿಚ್ಚುವುದಕ್ಕೂ ಇಲ್ಲವೆ ಅದನ್ನು ಬಿಚ್ಚಿನೋಡುವುದಕ್ಕೂ ಯಾರಿಂದಲೂ ಸಾಧ್ಯವಾಗಲಿಲ್ಲ.</verse>
				<verse number="4">ಆ ಸುರುಳಿಯನ್ನು ಬಿಚ್ಚಲೂ ನೋಡಲೂ ಯೋಗ್ಯನು ಒಬ್ಬನು ಇಲ್ಲವಲ್ಲ ಎಂದು ನಾನು ಬಹುವಾಗಿ ದುಃಖಿಸಿದೆ.</verse>
				<verse number="5">ಆಗ ಸಭಾಪ್ರಮುಖರಲ್ಲಿ ಒಬ್ಬರು ನನಗೆ, “ದುಃಖಿಸಬೇಡ, ಇಗೋ, ಯೂದಕುಲದ ಸಿಂಹವೂ ದಾವೀದನ ವಂಶಜರೂ ಆದ ಒಬ್ಬರು ಜಯಗಳಿಸಿದ್ದಾರೆ. ಅವರು ಆ ಏಳು ಮುದ್ರೆಗಳನ್ನು ಒಡೆದು ಈ ಸುರುಳಿಯನ್ನು ಬಿಚ್ಚಬಲ್ಲರು\, ಎಂದು ಹೇಳಿದರು.</verse>
				<verse number="6">ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಸಭಾಪ್ರಮುಖರಿದ್ದ ಸ್ಥಳಕ್ಕೂ ನಡುವೆ ಒಂದು ಕುರಿಮರಿ ನಿಂತಿರುವುದನ್ನು ಕಂಡೆ. ಅದು ಈಗಾಗಲೇ ಬಲಿಗೋಸ್ಕರ ವಧೆಯಾಗಿದ್ದಂತೆ ಕಾಣುತ್ತಿತ್ತು. ಆ ಕುರಿಮರಿಗೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇಡೀ ಜಗತ್ತಿಗೆ ಕಳುಹಿಸಲಾದ ದೇವರ ಸಪ್ತ ಆತ್ಮಗಳೇ ಅವು.</verse>
				<verse number="7">ಆ ಯಜ್ಞದ ಕುರಿಮರಿಯಾದವರು ಮುಂದೆ ಬಂದು ಸಿಂಹಾಸನದಲ್ಲಿ ಆಸೀನರಾಗಿದ್ದವರ ಬಲಗೈಯಲ್ಲಿದ್ದ ಸುರುಳಿಯನ್ನು ತೆಗೆದುಕೊಂಡರು.</verse>
				<verse number="8">ಸುರುಳಿಯನ್ನು ತೆಗೆದುಕೊಂಡಾಗ, ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ಆ ಯಜ್ಞದ ಕುರಿಮರಿಯ ಪಾದಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಸಭಾಪ್ರಮುಖರ ಕೈಗಳಲ್ಲಿ ಕಿನ್ನರಿಯೂ ಚಿನ್ನದ ಧೂಪಾರತಿಗಳೂ ಇದ್ದವು. ಆ ಧೂಪಾರತಿಗಳಲ್ಲಿ ದೇವಜನರ ಪ್ರಾರ್ಥನೆಯೆಂಬ ಧೂಪವು ತುಂಬಿತ್ತು.</verse>
				<verse number="9">ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.</verse>
				<verse number="10">ಏರ್ಪಡಿಸಿದೆ ನೀ ಅವರನು ನಮ್ಮ ದೇವರಿಗೋಸ್ಕರ ರಾಜವಂಶವಾಗಿ, ಯಾಜಕವರ್ಗವಾಗಿ. ಆಳುವರವರು ಸಮಸ್ತ ಭುವಿಯ ಮೇಲೆ.”</verse>
				<verse number="11">ಅನಂತರ ಅವರ ಸಿಂಹಾಸನದ, ನಾಲ್ಕು ಜೀವಿಗಳ ಹಾಗೂ ಸಭಾಪ್ರಮುಖರ ಸುತ್ತಲೂ ನಿಂತಿದ್ದ ಬಹುಮಂದಿ ದೇವದೂತರ ಸ್ವರವನ್ನು ಕೇಳಿಸಿಕೊಂಡೆ. ಅವರ ಸಂಖ್ಯೆ ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.</verse>
				<verse number="12">ಅವರೆಲ್ಲರೂ ಉಚ್ಚಕಂಠದಿಂದ: “ವಧಿತ ಕುರಿಮರಿಯಾದಾತನು ಶಕ್ತಿಯನು, ಸಿರಿತನವನು ಗೌರವವನು, ಘನಮಾನವನು ಸ್ತುತಿಯನು, ಸುಜ್ಞಾನವನು ಹೊಂದಲು ಯೋಗ್ಯನು,” ಎಂದು ಹಾಡಿದರು.</verse>
				<verse number="13">ಇದಲ್ಲದೆ, ಸ್ವರ್ಗ, ಭೂಮಿ, ಪಾತಾಳಗಳಲ್ಲೂ ಸಮುದ್ರದಲ್ಲೂ ಇರುವ ಸಮಸ್ತ ಸೃಷ್ಟಿಗಳು ಹೀಗೆ ಹಾಡುವುದನ್ನು ಕೇಳಿಸಿಕೊಂಡೆ: “ಸಿಂಹಾಸನದಲ್ಲಿ ಕುಳಿತವನಿಗೆ, ಯಜ್ಞಕುರಿಮರಿಯಾದಾತನಿಗೆ ಸಲ್ಲಲಿ ಯುಗಯುಗಾಂತರಕ್ಕೆ ಘನಮಾನ, ಗೌರವ, ಪರಾಕ್ರಮ, ಮತ್ತು ಮಹಿಮೆ.”</verse>
				<verse number="14">ಇದಕ್ಕುತ್ತರವಾಗಿ ಆ ನಾಲ್ಕು ಜೀವಿಗಳು, ‘ಆಮೆನ್’ ಎಂದು ಹೇಳಿದವು. ಸಭಾಪ್ರಮುಖರು ಸಾಷ್ಟಾಂಗವೆರಗಿ ನಮಸ್ಕಾರಮಾಡಿ ಆರಾಧಿಸಿದರು.</verse>
			</chapter>
			<chapter number="6">
				<verse number="1">ಇದನ್ನೂ ನಾನು ಕಂಡೆ: ಯಜ್ಞದ ಕುರಿಮರಿಯಾದಾತನು ಏಳು ಮುದ್ರೆಗಳಲ್ಲಿ ಒಂದನ್ನು ಒಡೆದನು. ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಗುಡುಗಿನಂತಿದ್ದ ಸ್ವರದಿಂದ, “ಇಲ್ಲಿ ಬಾ,” ಎಂದು ಕರೆಯುವುದನ್ನು ನಾನು ಕೇಳಿಸಿಕೊಂಡೆ.</verse>
				<verse number="2">ಆಗ ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ಬಿಲ್ಲೊಂದು ಇತ್ತು. ಅವನಿಗೆ ಜಯಮಾಲೆಯನ್ನು ಹಾಕಲಾಗಿತ್ತು. ಅವನು ಜಯಪ್ರದನಾಗಿ, ಜಯದ ಮೇಲೆ ಜಯಗಳಿಸುವ ಸಲುವಾಗಿ ಹೊರಟುಹೋದನು.</verse>
				<verse number="3">ಅನಂತರ ಯಜ್ಞದ ಕುರಿಮರಿಯು ಎರಡನೆಯ ಮುದ್ರೆಯನ್ನು ಒಡೆದಾಗ, ಎರಡನೆಯ ಜೀವಿಯು, “ಇಲ್ಲಿ ಬಾ,” ಎಂದು ಕರೆಯುವುದನ್ನು ಕೇಳಿಸಿಕೊಂಡೆ.</verse>
				<verse number="4">ಆಗ ಕೆಂಪು ಕುದುರೆ ಒಂದು ಹೊರಟುಬಂದಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ವಿಶ್ವದಲ್ಲಿ ಶಾಂತಿಯನ್ನು ಅಳಿಸಿಹಾಕಿ ಲೋಕದ ಜನರು ಒಬ್ಬರನ್ನೊಬ್ಬರು ಕೊಲ್ಲುವಂತೆ ಮಾಡುವ ಅಧಿಕಾರವನ್ನು ಅವನಿಗೆ ಕೊಡಲಾಗಿತ್ತು. ಇದಲ್ಲದೆ, ಅವನಿಗೆ ದೊಡ್ಡ ಖಡ್ಗವನ್ನೂ ಸಹ ಕೊಡಲಾಗಿತ್ತು.</verse>
				<verse number="5">ಆ ಯಜ್ಞದ ಕುರಿಮರಿ ಮೂರನೆಯ ಮುದ್ರೆಯನ್ನು ಒಡೆದಾಗ, ಮೂರನೆಯ ಜೀವಿಯು, “ಇಲ್ಲಿ ಬಾ,” ಎಂದು ಕರೆಯುವುದನ್ನು ಕೇಳಿಸಿಕೊಂಡೆ. ಆಗ ಕಪ್ಪು ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ತಕ್ಕಡಿ ಇತ್ತು.</verse>
				<verse number="6">ನಾಲ್ಕು ಜೀವಿಗಳ ಮಧ್ಯದಿಂದ ಹೊರಟಿತೋ ಎಂಬಂತೆ ಒಂದು ಧ್ವನಿ ನನಗೆ ಕೇಳಿಸಿತು. ಅದು, “ದಿನದ ಕೂಲಿಗೆ ಒಂದು ಕಿಲೋಗ್ರಾಂ ಗೋದಿ; ದಿನದ ಕೂಲಿಗೆ ಮೂರು ಕಿಲೋಗ್ರಾಂ ಜವೆಗೋದಿ; ಆದರೆ ಎಣ್ಣೆಯನ್ನಾಗಲಿ, ದ್ರಾಕ್ಷಾರಸವನ್ನಾಗಲಿ ಕೆಡಿಸಬೇಡ,” ಎಂದು ಹೇಳಿತು.</verse>
				<verse number="7">ಆ ಯಜ್ಞದ ಕುರಿಮರಿ ನಾಲ್ಕನೆಯ ಮುದ್ರೆಯನ್ನು ಒಡೆದಾಗ, ನಾಲ್ಕನೆಯ ಜೀವಿ, “ಇಲ್ಲಿ ಬಾ,” ಎಂದು ಕರೆಯುವುದನ್ನು ನಾನು ಕೇಳಿಸಿಕೊಂಡೆ.</verse>
				<verse number="8">ಆಗ ಬೂದು ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಹೆಸರು, ‘ಮೃತ್ಯು’ ಎಂದು. ಅವನನ್ನು ‘ಮೃತ್ಯುಲೋಕ’ ಎಂಬಾತನು ಹಿಂಬಾಲಿಸಿದನು. ಇವರಿಗೆ ಖಡ್ಗ, ಕ್ಷಾಮ, ಅಂಟುಜಾಡ್ಯ, ಕಾಡುಮೃಗ ಇವುಗಳಿಂದ ಭೂಲೋಕದ ಕಾಲುಭಾಗದ ಜನತೆಯನ್ನು ಕೊಂದುಹಾಕುವುದಕ್ಕೆ ಅಧಿಕಾರವನ್ನು ಕೊಡಲಾಗಿತ್ತು.</verse>
				<verse number="9">ಯಜ್ಞದ ಕುರಿಮರಿಯಾದಾತ ಐದನೆಯ ಮುದ್ರೆಯನ್ನು ಒಡೆದನು. ದೇವರ ಸಂದೇಶವನ್ನು ಸಾರಿದ ಪ್ರಯುಕ್ತ ಮತ್ತು ತಮ್ಮ ಪ್ರಾಮಾಣಿಕ ಸಾಕ್ಷ್ಯದ ಪ್ರಯುಕ್ತ ಹತರಾದವರ ಆತ್ಮಗಳು ಬಲಿಪೀಠದ ಕೆಳಗೆ ಇರುವುದನ್ನು ನಾನು ಕಂಡೆ.</verse>
				<verse number="10">ಅವರು ಆರ್ತಧ್ವನಿಯಿಂದ, ‘ಸರ್ವಶಕ್ತ ಪ್ರಭುವೇ, ಸತ್ಯವಂತರೇ, ಪರಿಶುದ್ಧರೇ, ನಮ್ಮನ್ನು ಕೊಲೆಮಾಡಿದ ಭೂನಿವಾಸಿಗಳಿಗೆ ಇನ್ನೆಷ್ಟುಕಾಲ ನ್ಯಾಯವಿಚಾರಣೆ ಮಾಡದೆ, ಸೇಡನ್ನು ತೀರಿಸಿಕೊಳ್ಳದೆ ಇರುತ್ತೀರಿ?” ಎಂದು ಕೇಳಿದರು.</verse>
				<verse number="11">ಅವರಲ್ಲಿ ಪ್ರತಿಯೊಬ್ಬನಿಗೂ ಬಿಳಿಯ ನಿಲುವಂಗಿಯನ್ನು ಕೊಡಲಾಗಿತ್ತು. ಅಲ್ಲದೆ ಅವರಿಗೆ, “ಇನ್ನು ತುಸುಕಾಲ ಕಾದುಕೊಂಡಿರಿ, ನಿಮ್ಮ ಹಾಗೆಯೇ ಹತರಾಗಬೇಕಾಗಿರುವ ನಿಮ್ಮ ಸಹೋದರರ ಮತ್ತು ಜೊತೆಸೇವಕರ ಪಟ್ಟಿಯು ಭರ್ತಿಯಾಗುವ ತನಕ ವಿಶ್ರಮಿಸಿ,” ಎಂದು ತಿಳಿಸಲಾಯಿತು.</verse>
				<verse number="12">ಆ ಯಜ್ಞದ ಕುರಿಮರಿ ಆರನೆಯ ಮುದ್ರೆಯನ್ನು ಒಡೆದಾಗ, ದೊಡ್ಡ ಭೂಕಂಪವಾಯಿತು. ಸೂರ್ಯನು ಕರಿಕಂಬಳಿಯಂತೆ ಕಪ್ಪಾದನು. ಪೂರ್ಣಚಂದ್ರನು ರಕ್ತದಂತೆ ಕೆಂಪಾದನು.</verse>
				<verse number="13">ಬಿರುಗಾಳಿಯಿಂದ ಅಂಜೂರ ಮರದ ಕಾಯಿಗಳು ಉದುರಿಬೀಳುವಂತೆ ನಕ್ಷತ್ರಗಳು ಆಕಾಶದಿಂದ ಭೂಮಿಗೆ ಬಿದ್ದವು.</verse>
				<verse number="14">ಆಕಾಶವು ಸುರುಳಿಯಂತೆ ಸುತ್ತಿಕೊಂಡು ಕಣ್ಮರೆಯಾಯಿತು. ಎಲ್ಲಾ ಪರ್ವತಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚಲಿಸಿದವು.</verse>
				<verse number="15">ಭೂರಾಜರು, ಅಧಿಪತಿಗಳು, ಸೇವಾನಾಯಕರು, ಸಿರಿವಂತರು, ಪರಾಕ್ರಮಿಗಳು, ದಾಸರು, ಸ್ವತಂತ್ರರು ಎಲ್ಲರೂ ಓಡಿಹೋಗಿ ಬೆಟ್ಟಗಳ ಗವಿಗಳಲ್ಲೂ ಮತ್ತು ಬಂಡೆಗಳ ಸಂದುಗಳಲ್ಲೂ ಅವಿತುಕೊಂಡರು.</verse>
				<verse number="16">ಅವರು ಆ ಬೆಟ್ಟಗಳನ್ನೂ ಬಂಡೆಗಳನ್ನೂ ಉದ್ದೇಶಿಸಿ, “ನಮ್ಮ ಮೇಲೆ ಬೀಳಿ; ಸಿಂಹಾಸನದಲ್ಲಿ ಆಸೀನರಾಗಿರುವವರ ಸಮ್ಮುಖದಿಂದಲೂ ಯಜ್ಞದ ಕುರಿಮರಿಯಾದಾತನ ಕೋಪಾಗ್ನಿಯಿಂದಲೂ ನಮ್ಮನ್ನು ಮರೆಮಾಡಿ;</verse>
				<verse number="17">ಏಕೆಂದರೆ, ಅವರ ಕೋಪಾಗ್ನಿಯ ಘೋರ ದಿನವು ಬಂದಿದೆ. ಅದರ ಮುಂದೆ ನಿಲ್ಲುವುದಕ್ಕೆ ಯಾರು ತಾನೇ ಶಕ್ತರು?” ಎಂದು ಹಲುಬಿದರು.</verse>
			</chapter>
			<chapter number="7">
				<verse number="1">ಇದಾದ ಬಳಿಕ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ; ನಾಲ್ಕುಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತಿದ್ದರು. ಭೂಮಿಯ ಮೇಲಾಗಲಿ, ಸಮುದ್ರದ ಮೇಲಾಗಲಿ, ಮರಗಳ ಮೇಲಾಗಲಿ ಗಾಳಿಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿಯನ್ನು ಅವರು ತಡೆಹಿಡಿದಿದ್ದರು.</verse>
				<verse number="2">ಆಗ ಪೂರ್ವದಿಕ್ಕಿನಿಂದ ಮತ್ತೊಬ್ಬ ದೇವದೂತನು ಏರಿಬಂದನು. ಅವನು ಜೀವಸ್ವರೂಪಿಯಾದ ದೇವರ ಮುದ್ರೆಯನ್ನು ಕೈಯಲ್ಲಿ ಹಿಡಿದಿದ್ದನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನು ಮಾಡುವ ಅಧಿಕಾರವನ್ನು ಪಡೆದಿದ್ದ ನಾಲ್ಕು ಮಂದಿ ದೇವದೂತರಿಗೆ:</verse>
				<verse number="3">“ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ನಾವು ಮುದ್ರೆಯೊತ್ತುವ ತನಕ ಭೂಮಿಗಾಗಲಿ, ಸಮುದ್ರಕ್ಕಾಗಲಿ, ಇಲ್ಲವೇ ಮರಗಳಿಗಾಗಲಿ ಕೇಡನ್ನು ಮಾಡಬೇಡಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.</verse>
				<verse number="4">ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ನನಗೆ ಕೇಳಿಬಂತು. ಇಸ್ರಯೇಲರು ಪ್ರತಿಯೊಂದು ಕುಲದಲ್ಲಿ ಮುದ್ರೆಯೊತ್ತಿಸಿಕೊಂಡವರು ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಮಂದಿ. ಅವರ ಬಿಡಿ ಸಂಖ್ಯೆ ಹೀಗಿತ್ತು:</verse>
				<verse number="5">ಯೂದನ ಕುಲದಿಂದ ಹನ್ನೆರಡು ಸಾವಿರ ರೂಬೇನನ ಕುಲದಿಂದ ಹನ್ನೆರಡು ಸಾವಿರ ಗಾದನ ಕುಲದಿಂದ ಹನ್ನೆರಡು ಸಾವಿರ</verse>
				<verse number="6">ಅಷೇರನ ಕುಲದಿಂದ ಹನ್ನೆರಡು ಸಾವಿರ ನೆಫ್ತಲೀಮನ ಕುಲದಿಂದ ಹನ್ನೆರಡು ಸಾವಿರ ಮನಸ್ಸೆಯ ಕುಲದಿಂದ ಹನ್ನೆರಡು ಸಾವಿರ</verse>
				<verse number="7">ಸಿಮೆಯೋನನ ಕುಲದಿಂದ ಹನ್ನೆರಡು ಸಾವಿರ ಲೇವಿಯ ಕುಲದಿಂದ ಹನ್ನೆರಡು ಸಾವಿರ ಇಸ್ಸಾಕರನ ಕುಲದಿಂದ ಹನ್ನೆರಡು ಸಾವಿರ</verse>
				<verse number="8">ಜೆಬುಲೋನನ ಕುಲದಿಂದ ಹನ್ನೆರಡು ಸಾವಿರ ಜೋಸೆಫನ ಕುಲದಿಂದ ಹನ್ನೆರಡು ಸಾವಿರ ಬೆನ್ಯಮೀನನ ಕುಲದಿಂದ ಹನ್ನೆರಡು ಸಾವಿರ.</verse>
				<verse number="9">ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ; ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.</verse>
				<verse number="10">ಅವರು ಗಟ್ಟಿಯಾದ ಧ್ವನಿಯಿಂದ: “ಸಿಂಹಾಸನಾರೂಢರಾದ ದೇವರಿಂದ, ಬಲಿಯರ್ಪಿತರಾದ ಯಜ್ಞದ ಕುರಿಮರಿಯಿಂದ ಲಭಿಸುತ್ತದೆಮಗೆ ಜೀವೋದ್ಧಾರ,” ಎಂದು ಹಾಡಿದರು.</verse>
				<verse number="11">ಆಗ ಸಭಾಪ್ರಮುಖರ ಮತ್ತು ನಾಲ್ಕು ಜೀವಿಗಳ ಸಮೇತ ದೇವದೂತರೆಲ್ಲರೂ ಸಿಂಹಾಸನದ ಸುತ್ತಲೂ ನಿಂತಿದ್ದರು. ಅವರೆಲ್ಲರೂ ಸಿಂಹಾಸನದ ಮುಂದೆ ಸಾಷ್ಟಾಂಗ ನಮಸ್ಕಾರಮಾಡಿ,</verse>
				<verse number="12">“ಆಮೆನ್‍, ಸ್ತುತಿಸ್ತೋತ್ರವೂ ಘನಮಾನವೂ ಜ್ಞಾನವೂ ಧನ್ಯವಾದವೂ ಶಕ್ತಿಯೂ ಪರಾಕ್ರಮವೂ ಸಲ್ಲಲಿ ಯುಗಯುಗಾಂತರಕ್ಕೂ, ಆಮೆನ್,” ಎಂದು ಹಾಡುತ್ತಾ ದೇವರನ್ನು ಆರಾಧಿಸಿದರು.</verse>
				<verse number="13">ಸಭಾಪ್ರಮುಖರಲ್ಲಿ ಒಬ್ಬನು, “ಶ್ವೇತಾಂಬರರಾದ ಇವರೆಲ್ಲರೂ ಯಾರು? ಎಲ್ಲಿಂದ ಬಂದರು?” ಎಂದು ನನ್ನ‍ನ್ನು ಪ್ರಶ್ನಿಸಿದನು.</verse>
				<verse number="14">ಅದಕ್ಕೆ ನಾನು, “ಸ್ವಾಮೀ ನೀವೇ ಬಲ್ಲಿರಿ,” ಎಂದು ಉತ್ತರಕೊಟ್ಟೆ. ಆಗ ಆತನು ನನಗೆ ಹೀಗೆಂದನು: “ಇವರು ಆ ಭೀಕರ ಹಿಂಸೆಬಾಧೆಯನ್ನು ಅನುಭವಿಸಿ ಬಂದವರು. ತಮ್ಮ ನಿಲುವಂಗಿಗಳನ್ನು ಯಜ್ಞದ ಕುರಿಮರಿಯ ರಕ್ತದಿಂದ ತೊಳೆದು ಬಿಳುಪಾಗಿಸಿಕೊಂಡಿದ್ದಾರೆ.</verse>
				<verse number="15">‘ಇರುವರು ದೇವರ ಸಿಂಹಾಸನದ ಸಮ್ಮುಖದಲ್ಲೇ ಆರಾಧಿಪರಾತನನು ಹಗಲಿರುಳು ದೇವಾಲಯದಲ್ಲೇ ಸಂರಕ್ಷಿಪನಾತನು ಅವರನ್ನು ಗುಡಾರದಂತೆ.</verse>
				<verse number="16">ಇನ್ನಿರದು ಅವರಿಗೆ ಹಸಿವು ಬಾಯಾರಿಕೆ ತಟ್ಟದವರನು ಬಿಸಿಲಿನ ತಾಪ, ಸೂರ್ಯನ ಕೋಪ.</verse>
				<verse number="17">ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು.</verse>
			</chapter>
			<chapter number="8">
				<verse number="1">ಆ ಯಜ್ಞದ ಕುರಿಮರಿ ಏಳನೆಯ ಮುದ್ರೆಯನ್ನು ಒಡೆದಾಗ ಸ್ವರ್ಗದಲ್ಲಿ ಅರ್ಧ ಗಂಟೆಯವರೆಗೆ ಮೌನವುಂಟಾಯಿತು.</verse>
				<verse number="2">ಬಳಿಕ ನಾನು, ದೇವರ ಸಾನ್ನಿಧ್ಯದಲ್ಲಿ ನಿಂತಿದ್ದ ಏಳು ದೇವದೂತರನ್ನು ಕಂಡೆ. ಅವರಿಗೆ ಏಳು ತುತೂರಿಗಳನ್ನು ಕೊಡಲಾಗಿತ್ತು.</verse>
				<verse number="3">ಅನಂತರ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಅವನ ಕೈಯಲ್ಲಿ ಚಿನ್ನದ ಧೂಪಾರತಿ ಇತ್ತು. ಸಿಂಹಾಸನದ ಸಮ್ಮುಖದಲ್ಲಿರುವ ಚಿನ್ನದ ಬಲಿಪೀಠದ ಮೇಲೆ ದೇವಜನರೆಲ್ಲರ ಪ್ರಾರ್ಥನೆಯೊಡನೆ ಸಮರ್ಪಿಸಲು ಅವನಿಗೆ ಬಹಳಷ್ಟು ಧೂಪವನ್ನು ಕೊಡಲಾಗಿತ್ತು.</verse>
				<verse number="4">ಧೂಪದ ಸುವಾಸನೆ ದೇವಜನರ ಪ್ರಾರ್ಥನೆಯೊಂದಿಗೆ ಆ ದೂತನ ಕೈಯಿಂದ ದೇವರ ಸನ್ನಿಧಿಗೆ ಏರಿಹೋಯಿತು.</verse>
				<verse number="5">ಅನಂತರ ಆ ದೇವದೂತನು ಧೂಪಾರತಿಯನ್ನು ಎತ್ತಿಕೊಂಡು, ಅದನ್ನು ಬಲಿಪೀಠದ ಮೇಲಿದ್ದ ಕೆಂಡಗಳಿಂದ ತುಂಬಿಸಿ, ಭೂಮಿಗೆ ಎಸೆದನು. ಆಗ ಮಿಂಚು, ಗುಡುಗು, ಗರ್ಜನೆಗಳು ಮತ್ತು ಭೂಕಂಪವು ಉಂಟಾದವು.</verse>
				<verse number="6">ಏಳು ತುತೂರಿಗಳನ್ನು ಹಿಡಿದಿದ್ದ ಏಳುಮಂದಿ ದೇವದೂತರು ತಮ್ಮ ತಮ್ಮ ತುತೂರಿಗಳನ್ನು ಊದಲು ಸಿದ್ಧರಾದರು.</verse>
				<verse number="7">ಮೊದಲನೆಯ ದೇವದೂತನು ತುತೂರಿಯನ್ನು ಊದಿದನು. ಭೂಮಿಯ ಮೇಲೆ ರಕ್ತಮಿಶ್ರಿತವಾದ ಆಲಿಕಲ್ಲಿನ ಮತ್ತು ಬೆಂಕಿಯ ಸುರಿಮಳೆಯಾಯಿತು. ಪರಿಣಾಮವಾಗಿ, ಭೂಮಿಯ ಮೂರನೆಯ ಒಂದು ಭಾಗ ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು. ಹಸಿರು ಹುಲ್ಲೆಲ್ಲಾ ಉರಿದುಹೋಯಿತು.</verse>
				<verse number="8">ಎರಡನೆಯ ದೇವದೂತನು ತುತೂರಿಯನ್ನು ಊದಿದನು. ಬೆಂಕಿ ಹತ್ತಿ ಉರಿಯುತ್ತಿರುವ ಪರ್ವತವೋ ಎಂಬಂತಿದ್ದ ವಸ್ತುವೊಂದನ್ನು ಸಮುದ್ರಕ್ಕೆ ಎಸೆಯಲಾಯಿತು. ಸಮುದ್ರದಲ್ಲಿ ಮೂರನೆಯ ಒಂದು ಭಾಗ ರಕ್ತವಾಗಿ ಮಾರ್ಪಟ್ಟಿತು.</verse>
				<verse number="9">ಸಮುದ್ರದಲ್ಲಿದ್ದ ಜಲಜಂತುಗಳಲ್ಲಿ ಮೂರನೆಯ ಒಂದು ಭಾಗ ಸತ್ತುಹೋಯಿತು. ಹಡಗುಗಳಲ್ಲಿ ಮೂರನೆಯ ಒಂದು ಭಾಗ ನಾಶವಾಯಿತು.</verse>
				<verse number="10">ಮೂರನೆಯ ದೇವದೂತನು ತುತೂರಿಯನ್ನು ಊದಿದನು. ಪಂಜಿನಂತೆ ಉರಿಯುತ್ತಿದ್ದ ದೊಡ್ಡ ನಕ್ಷತ್ರವೊಂದು ಆಕಾಶದಿಂದ ಕೆಳಕ್ಕೆ ಬಿತ್ತು. ಅದು ನದಿಗಳಲ್ಲಿ ಮೂರನೆಯ ಒಂದು ಭಾಗದ ಮೇಲೂ ನೀರಿನ ಒರತೆಗಳ ಮೇಲೂ ಬಿತ್ತು.</verse>
				<verse number="11">ಆ ನಕ್ಷತ್ರದ ಹೆಸರು ‘ವಿಷಕನ್ಯೆ'. ನೀರಿನಲ್ಲಿ ಮೂರನೆಯ ಒಂದು ಭಾಗ ವಿಷವಾಯಿತು; ಇದರಿಂದಾಗಿ ಅನೇಕರು ನೀರನ್ನು ಕುಡಿದು ಸತ್ತರು.</verse>
				<verse number="12">ನಾಲ್ಕನೆಯ ದೇವದೂತನು ತುತೂರಿಯನ್ನು ಊದಿದನು. ಸೂರ್ಯಚಂದ್ರ ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗಕ್ಕೆ ಧಕ್ಕೆ ಉಂಟಾಯಿತು. ಅವುಗಳ ಮೂರನೆಯ ಒಂದು ಭಾಗ ಕಾಂತಿಹೀನವಾಯಿತು. ಇದರಿಂದಾಗಿ ಹಗಲಿನಲ್ಲೂ ರಾತ್ರಿಯಲ್ಲೂ ಮೂರನೆಯ ಒಂದು ಭಾಗದಷ್ಟು ಬೆಳಕು ಕಡಿಮೆಯಾಯಿತು.</verse>
				<verse number="13">ಅನಂತರ ಆಕಾಶಮಧ್ಯದಲ್ಲಿ ಒಂದು ಗರುಡ ಪಕ್ಷಿ ಹಾರಾಡುತ್ತಿರುವುದನ್ನು ನಾನು ಕಂಡೆ. ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು,” ಎಂದು ಗಟ್ಟಿಯಾಗಿ ಕೂಗುತ್ತಿತ್ತು.</verse>
			</chapter>
			<chapter number="9">
				<verse number="1">ಐದನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಆಕಾಶದಿಂದ ಭೂಮಿಗೆ ಬಿದ್ದಿದ್ದ ಒಂದು ನಕ್ಷತ್ರವನ್ನು ಕಂಡೆ. ಪಾತಾಳಕೂಪದ ಬೀಗದ ಕೈಯನ್ನು ಅವನಿಗೆ ಕೊಡಲಾಗಿತ್ತು.</verse>
				<verse number="2">ಅವನು ಆ ಕೂಪದ ಮುಚ್ಚಳವನ್ನು ತೆರೆದನು. ಅದರೊಳಗಿಂದ ದಟ್ಟಹೊಗೆ ದೊಡ್ಡ ಕುಲುಮೆ ಒಂದರಿಂದ ಬರುತ್ತಿರುವಂತೆ ಮೇಲೇರಿತು. ಇದರಿಂದಾಗಿ ಸೂರ್ಯನೂ ವಾಯುಮಂಡಲವೂ ಕಪ್ಪಾದವು.</verse>
				<verse number="3">ಆ ಹೊಗೆಯೊಳಗಿಂದ ಮಿಡತೆಗಳು ಹೊರಟು ಭೂಮಿಗೆ ಬಂದವು. ಭೂಮಿಯಲ್ಲಿ ಇರುವ ಚೇಳುಗಳಿಗಿರುವಂಥ ಶಕ್ತಿಯನ್ನು ಅವುಗಳಿಗೆ ಕೊಡಲಾಗಿತ್ತು.</verse>
				<verse number="4">ಭೂಮಿಯ ಮೇಲಣ ಹುಲ್ಲಿಗಾಗಲಿ, ಯಾವುದೇ ಹಸಿರು ಇಲ್ಲವೇ ಮರಗಳಿಗಾಗಲಿ ಕೇಡನ್ನುಂಟುಮಾಡಬಾರದು ಎಂದೂ ಮಾನವರಲ್ಲಿ ಯಾರ ಹಣೆಯ ಮೇಲೆ ದೇವರ ಮುದ್ರೆಯಿಲ್ಲವೋ ಅಂಥವರಿಗೆ ಮಾತ್ರ ಕೇಡು ಮಾಡಬಹುದೆಂದೂ ಅಪ್ಪಣೆಯಾಗಿತ್ತು.</verse>
				<verse number="5">ಅಲ್ಲದೆ, ಅವರನ್ನು ಕೊಲ್ಲದೆಯೇ ಐದು ತಿಂಗಳಕಾಲ ಬಾಧಿಸಬೇಕೆಂದು ಆಜ್ಞಾಪಿಸಲಾಗಿತ್ತು. ಆ ಬಾಧೆ, ಚೇಳು ಕುಟುಕಿದರೆ ಉಂಟಾಗುವ ಬಾಧೆಯಂಥದ್ದು.</verse>
				<verse number="6">ಆಂಥ ದಿನಗಳಲ್ಲಿ ಮನುಷ್ಯರು ಮರಣವನ್ನು ಅಪೇಕ್ಷಿಸುವರು. ಆದರೆ ಅದು ಅವರಿಗೆ ಪ್ರಾಪ್ತವಾಗುವುದಿಲ್ಲ. ಸತ್ತರೆ ಸಾಕೆಂದು ಬಯಸುವರು; ಪ್ರಯತ್ನಿಸುವರು. ಆದರೆ ಮೃತ್ಯು ಅವರಿಂದ ದೂರ ಸರಿಯುವುದು.</verse>
				<verse number="7">ಆ ಮಿಡತೆಗಳು ನೋಡುವುದಕ್ಕೆ ಸಮರಕ್ಕೆ ಸನ್ನದ್ಧರಾಗಿರುವ ಕುದುರೆಗಳಂತಿದ್ದವು. ಅವುಗಳ ತಲೆಯ ಮೇಲೆ ಚಿನ್ನದ ಕಿರೀಟವಿದ್ದಂತೆ ಕಾಣಿಸುತ್ತಿತ್ತು. ಮುಖಗಳು ಮನುಷ್ಯರ ಮುಖಗಳಂತೆ ಇದ್ದವು.</verse>
				<verse number="8">ಅವುಗಳ ಕೂದಲು ಸ್ತ್ರೀಯರ ಕೂದಲಿನಂತೆಯೂ ಹಲ್ಲುಗಳು ಸಿಂಹದ ಹಲ್ಲುಗಳಂತೆಯೂ ಇದ್ದವು.</verse>
				<verse number="9">ಅವುಗಳ ಮೈಚಿಪ್ಪು ಕವಚದಂತಿತ್ತು. ರೆಕ್ಕೆ ಬಡಿಯುವ ಶಬ್ದವು ಸಮರಕ್ಕೆ ಧಾವಿಸುವ ಹಲವಾರು ರಥಾಶ್ವಗಳ ಶಬ್ದವನ್ನು ಹೋಲುತ್ತಿತ್ತು.</verse>
				<verse number="10">ಚೇಳುಗಳಿಗಿರುವಂತೆ ಬಾಲಗಳೂ ಕೊಂಡಿಗಳೂ ಅವುಗಳಿಗಿದ್ದವು. ಐದು ತಿಂಗಳವರೆಗೆ ಮಾನವರನ್ನು ಬಾಧಿಸುವ ಶಕ್ತಿ ಆ ಬಾಲಗಳಿಗಿತ್ತು.</verse>
				<verse number="11">ಪಾತಾಳಕೂಪದ ದೂತನೇ ಅವುಗಳನ್ನು ಆಳುವ ಅರಸು. ಅವನಿಗೆ ಹಿಬ್ರಿಯ ಭಾಷೆಯಲ್ಲಿ, ‘ಅಬದ್ದೋನ್’ ಎಂದೂ ಗ್ರೀಕ್ ಭಾಷೆಯಲ್ಲಿ, ‘ಅಪೊಲ್ಲುವೋನ್’ ಎಂದೂ ಹೆಸರು.</verse>
				<verse number="12">ಹೀಗೆ ಮೊದಲನೆಯ ವಿಪತ್ತು ಮುಗಿಯಿತು. ಇಗೋ, ಇನ್ನೆರಡು ವಿಪತ್ತುಗಳು ಬಂದೆರಗಲಿವೆ:</verse>
				<verse number="13">ಆರನೆಯ ದೇವದೂತನು ತುತೂರಿಯನ್ನು ಊದಿದನು. ದೇವರ ಸಾನ್ನಿಧ್ಯದಲ್ಲಿ ಇರುವ ಚಿನ್ನದ ಬಲಿಪೀಠದ ನಾಲ್ಕು ಮೂಲೆಗಳಿಂದ ಹೊರಟ ಒಂದು ಶಬ್ದ ನನಗೆ ಕೇಳಿಸಿತು.</verse>
				<verse number="14">ತುತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ ಅದು, “ಯೂಫ್ರೆಟಿಸ್ ಮಹಾನದಿಯ ಬಳಿ ಕಟ್ಟಲಾಗಿರುವ ನಾಲ್ಕು ದೇವದೂತರನ್ನು ಬಿಚ್ಚಿಬಿಡು,” ಎಂದು ಆಜ್ಞಾಪಿಸಿತು.</verse>
				<verse number="15">ಮಾನವ ಜನಾಂಗದ ಮೂರನೆಯ ಒಂದು ಭಾಗವನ್ನು ಸಂಹರಿಸುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಾಗಿ ನಿಂತಿದ್ದ ಆ ನಾಲ್ಕು ದೇವದೂತರನ್ನು ಬಂಧಮುಕ್ತರನ್ನಾಗಿ ಮಾಡಲಾಯಿತು.</verse>
				<verse number="16">ಕುದುರೆ ಸೈನ್ಯದ ಸಂಖ್ಯೆ ಇಪ್ಪತ್ತು ಕೋಟಿ ಎಂದು ಹೇಳಿದುದು ನನಗೆ ಕೇಳಿಸಿತು.</verse>
				<verse number="17">ಹೀಗೆ ಕುದುರೆಗಳನ್ನೂ ಅವುಗಳ ಮೇಲೆ ಕುಳಿತ ಸವಾರರನ್ನೂ ನಾನು ದರ್ಶನದಲ್ಲಿ ಕಂಡೆ. ಆ ಸವಾರರು ಬೆಂಕಿಯ, ನೀಲಮಣಿಯ ಹಾಗೂ ಗಂಧಕ ವರ್ಣಗಳ ಕವಚಗಳನ್ನು ಧರಿಸಿದ್ದರು. ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತೆ ಇದ್ದವು. ಅವುಗಳ ಬಾಯಿಂದ ಬೆಂಕಿ, ಹೊಗೆ ಮತ್ತು ಗಂಧಕ ಹೊರಬರುತ್ತಿದ್ದವು.</verse>
				<verse number="18">ಅವುಗಳ ಬಾಯಿಂದ ಬರುತ್ತಿದ್ದ ಇವುಗಳು ಮೂರು ವಿಪತ್ತುಗಳಾಗಿದ್ದವು. ಇವುಗಳಿಂದ ಮಾನವಜನಾಂಗದ ಮೂರನೆಯ ಒಂದು ಭಾಗ ಹತವಾಯಿತು.</verse>
				<verse number="19">ಕುದುರೆಗಳ ಶಕ್ತಿಯು ಅವುಗಳ ಬಾಯಲ್ಲೂ ಬಾಲಗಳಲ್ಲೂ ಅಡಗಿತ್ತು. ಆ ಬಾಲಗಳು ಸರ್ಪಗಳ ತಲೆಯಂತೆ ಇದ್ದವು ಮತ್ತು ಗಾಯಗೊಳಿಸುವ ಶಕ್ತಿ ಅವಕ್ಕಿತ್ತು.</verse>
				<verse number="20">ಆ ವಿಪತ್ತುಗಳಿಂದ ಸಾಯದೆ ಬದುಕಿದ್ದ ಜನರು ತಮ್ಮ ದುಷ್ಕೃತ್ಯಗಳನ್ನು ಬಿಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ; ದೆವ್ವಾರಾಧನೆಯನ್ನು ತ್ಯಜಿಸಲಿಲ್ಲ; ನೋಡಲಾರದ, ಕೇಳಿಸಿಕೊಳ್ಳಲಾರದ ಮತ್ತು ನಡೆಯಲಾರದ ವಿಗ್ರಹಗಳನ್ನು ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಲ್ಲಿ ಮಾಡಿ ಪೂಜಿಸುವುದನ್ನು ಕೈಬಿಡಲಿಲ್ಲ.</verse>
				<verse number="21">ಇಷ್ಟೇ ಅಲ್ಲದೆ ತಮ್ಮ ಕೊಲೆಗಡುಕತನ, ಮಾಟಮಂತ್ರ, ಹಾದರ ಮತ್ತು ಕಳ್ಳತನಗಳನ್ನು ತೊರೆದು ಮನಸ್ಸಾಂತರಗೊಳ್ಳಲಿಲ್ಲ.</verse>
			</chapter>
			<chapter number="10">
				<verse number="1">ನಾನು ಮತ್ತೊಂದು ದೃಶ್ಯವನ್ನು ಕಂಡೆ. ಒಬ್ಬ ಬಲಿಷ್ಠ ದೇವದೂತನು ಸ್ವರ್ಗದಿಂದ ಇಳಿದುಬಂದನು. ಅವನು ಮೇಘಾಂಬರನಾಗಿದ್ದನು. ಅವನ ತಲೆಯ ಮೇಲೆ ಮುಗಿಲು ಬಿಲ್ಲೊಂದು ಇತ್ತು. ಮುಖವು ಸೂರ್ಯನಂತೆ ಇತ್ತು. ಕಾಲುಗಳು ಅಗ್ನಿಸ್ತಂಭಗಳಂತಿದ್ದವು.</verse>
				<verse number="2">ಅವನ ಕೈಯಲ್ಲಿ ತೆರೆದಿದ್ದ ಚಿಕ್ಕ ಸುರುಳಿ ಒಂದಿತ್ತು. ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು ನಿಂತಿದ್ದನು.</verse>
				<verse number="3">ಅವನು ಗಟ್ಟಿಯಾದ ಸ್ವರದಿಂದ ಕೂಗಿದನು. ಅದು ಸಿಂಹದ ಗರ್ಜನೆಯಂತಿತ್ತು. ಅವನು ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಮಾರ್ದನಿಸಿದವು.</verse>
				<verse number="4">ಏಳು ಗುಡುಗುಗಳು ನುಡಿದುದನ್ನು ಕೂಡಲೇ ನಾನು ಬರೆಯಬೇಕೆಂದಿದ್ದೆ. ಆಗ ಸ್ವರ್ಗದಿಂದ ಬಂದ ಒಂದು ಧ್ವನಿ, “ಆ ಏಳು ಗುಡುಗುಗಳು ನುಡಿದುದನ್ನು ರಹಸ್ಯವಾಗಿ ಇಡು. ಅವುಗಳನ್ನು ಬರೆಯಬೇಡ,” ಎಂದು ನನಗೆ ಆಜ್ಞಾಪಿಸಿತು.</verse>
				<verse number="5">ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ಕಾಲುಗಳನ್ನಿಟ್ಟು ನಿಂತಿದ್ದ ದೇವದೂತನು ತನ್ನ ಬಲಗೈಯನ್ನು ಸ್ವರ್ಗದ ಕಡೆಗೆ ಎತ್ತಿದನು.</verse>
				<verse number="6">ಅನಂತರ ಸ್ವರ್ಗ, ಭೂಮಿ, ಸಮುದ್ರ ಇವುಗಳನ್ನೂ ಇವುಗಳಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದ ಹಾಗು ಯುಗಯುಗಾಂತರಕ್ಕೂ ಜೀವಿಸುವ ದೇವರ ಹೆಸರಿನಲ್ಲಿ ಶಪಥಮಾಡಿ ಹೀಗೆ ಹೇಳಿದನು: “ಇನ್ನು ನಿಧಾನಿಸುವಂತಿಲ್ಲ;</verse>
				<verse number="7">ಏಳನೆಯ ದೇವದೂತನು ತುತೂರಿಯನ್ನು ಊದುವನು. ಆಗ ದೇವರು ಇದುವರೆಗೆ ನಿಗೂಢವಾಗಿಟ್ಟಿದ್ದ ತಮ್ಮ ಯೋಜನೆಯನ್ನು ತಮ್ಮ ದಾಸರಾದ ಪ್ರವಾದಿಗಳಿಗೆ ಮುಂತಿಳಿಸಿದ್ದ ಪ್ರಕಾರ ಈಡೇರಿಸುವರು.”</verse>
				<verse number="8">ಸ್ವರ್ಗದಿಂದ ನನಗೆ ಕೇಳಿಸಿದ ಧ್ವನಿ ಮತ್ತೊಮ್ಮೆ ನನ್ನೊಡನೆ ಮಾತನಾಡಿ, “ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ಕಾಲಿಟ್ಟು ನಿಂತಿರುವ ದೇವದೂತನ ಬಳಿಗೆ ಹೋಗು. ಆತನ ಕೈಯಲ್ಲಿರುವ ತೆರೆದ ಸುರುಳಿಯನ್ನು ತೆಗೆದುಕೋ,” ಎಂದು ತಿಳಿಸಿತು.</verse>
				<verse number="9">ನಾನು ಆ ದೇವದೂತನ ಬಳಿಗೆ ಹೋಗಿ, “ಆ ಚಿಕ್ಕ ಸುರುಳಿಯನ್ನು ನನಗೆ ಕೊಡು,” ಎಂದು ಕೇಳಿದೆ. ಅವನು “ತೆಗೆದುಕೋ, ಇದನ್ನು ತಿನ್ನು. ಇದು ನಿನ್ನ ಹೊಟ್ಟೆಯಲ್ಲಿ ಕಹಿಯಾಗಿಯೂ ನಿನ್ನ ಬಾಯಲ್ಲಿ ಜೇನುತುಪ್ಪದಂತೆ ಸಿಹಿಯಾಗಿಯೂ ಇರುತ್ತದೆ,” ಎಂದನು.</verse>
				<verse number="10">ಅಂತೆಯೇ, ನಾನು ಆ ಚಿಕ್ಕ ಸುರುಳಿಯನ್ನು ದೇವದೂತನ ಕೈಯಿಂದ ತೆಗೆದುಕೊಂಡು ತಿಂದೆ. ಅದು ನನ್ನ ಬಾಯಲ್ಲಿ ಜೇನುತುಪ್ಪದಂತೆ ಸಿಹಿಯಾಗಿತ್ತು. ಆದರೆ ಅದನ್ನು ತಿಂದಮೇಲೆ ನನ್ನ ಹೊಟ್ಟೆಯೆಲ್ಲಾ ಕಹಿಯಾಯಿತು.</verse>
				<verse number="11">ಅನಂತರ, ದೇವದೂತನು ನನಗೆ, “ನೀನು ಇನ್ನೂ ಅನೇಕ ಜನರ, ಜನಾಂಗಗಳ, ಭಾಷೆಗಳನ್ನಾಡುವವರ ಹಾಗು ಅರಸರಾದವರ ವಿರುದ್ಧ ಪ್ರವಾದನೆಯನ್ನು ಸಾರಬೇಕು,” ಎಂದು ಆಜ್ಞಾಪಿಸಿದನು.</verse>
			</chapter>
			<chapter number="11">
				<verse number="1">ಇದಾದ ನಂತರ ಅಳತೆಗೋಲಿನಂಥ ಒಂದು ಕೋಲನ್ನು ನನಗೆ ಕೊಟ್ಟು ಹೀಗೆ ತಿಳಿಸಲಾಯಿತು: “ನೀನೆದ್ದು ದೇವರ ಆಲಯವನ್ನೂ ಬಲಿಪೀಠವನ್ನೂ ಅಳತೆಮಾಡು. ಆಲಯದಲ್ಲಿ ಆರಾಧಿಸುತ್ತಿರುವವರನ್ನು ಲೆಕ್ಕಮಾಡು.</verse>
				<verse number="2">ಆಲಯದ ಹೊರ ಅಂಗಳವನ್ನು ಅಳತೆಮಾಡಬೇಡ; ಅದನ್ನು ಬಿಟ್ಟುಬಿಡು. ಅದನ್ನು ಜನರಿಗೆ ಬಿಟ್ಟುಕೊಡಲಾಗಿದೆ. ಅವರು ಪವಿತ್ರನಗರವನ್ನು ನಲವತ್ತೆರಡು ತಿಂಗಳವರೆಗೆ ತುಳಿದಾಡುವರು.</verse>
				<verse number="3">ನಾನು ನನ್ನ ಇಬ್ಬರು ಸಾಕ್ಷಿಗಳನ್ನು ಕಳುಹಿಸುವೆನು. ಅವರು ಗೋಣಿತಟ್ಟನ್ನು ಉಟ್ಟುಕೊಂಡು ಒಂದು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದಿಸುವರು.”</verse>
				<verse number="4">ಲೋಕಾಧಿಪತಿಯಾದ ದೇವರ ಸಾನ್ನಿಧ್ಯದಲ್ಲಿರುವ ಎರಡು ಓಲಿವ್ ಮರಗಳು ಮತ್ತು ಎರಡು ದೀಪಸ್ತಂಭಗಳು ಇವರೇ.</verse>
				<verse number="5">ಯಾವನಾದರು ಇವರಿಗೆ ಕೇಡು ಬಗೆದರೆ ಇವರ ಬಾಯಿಯಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ದಹಿಸಿಬಿಡುತ್ತದೆ. ಇವರಿಗೆ ಕೇಡು ಬಗೆಯಬೇಕೆಂದಿರುವವನು ಹೀಗೆಯೇ ಹತನಾಗುತ್ತಾನೆ.</verse>
				<verse number="6">ತಾವು ಪ್ರವಾದನೆ ಮಾಡುವ ದಿನಗಳಲ್ಲಿ ಮಳೆ ಬಾರದಂತೆ ಆಕಾಶವನ್ನು ಮುಚ್ಚಿಬಿಡುವ ಸಾಮರ್ಥ್ಯ ಇವರಿಗಿದೆ. ಇದಲ್ಲದೆ, ಇವರಿಗೆ ಇಷ್ಟಬಂದಾಗಲೆಲ್ಲಾ ನೀರನ್ನು ರಕ್ತವನ್ನಾಗಿ ಪರಿವರ್ತಿಸುವ ಹಾಗು ಸಕಲ ವಿಧವಾದ ಉಪದ್ರವಗಳಿಂದ ಜಗತ್ತನ್ನು ಪೀಡಿಸುವ ಅಧಿಕಾರ ಇವರಿಗೆ ಇರುತ್ತದೆ.</verse>
				<verse number="7">ಇವರ ಸಾಕ್ಷ್ಯನೀಡಿಕೆ ಮುಗಿದ ನಂತರ ಪಾತಾಳಕೂಪದಿಂದ ಮೃಗವೊಂದು ಮೇಲೇರಿಬರುತ್ತದೆ; ಅದು ಇವರೊಡನೆ ಯುದ್ಧಮಾಡಿ, ಜಯಗಳಿಸಿ ಇವರನ್ನು ಕೊಂದುಹಾಕುತ್ತದೆ.</verse>
				<verse number="8">ಈ ಸಾಕ್ಷಿಗಳ ಶವಗಳು ಆ ಮಹಾನಗರದ ಬೀದಿಪಾಲಾಗುವುವು. ಆ ನಗರವನ್ನು ಸೊದೋಮ್ ಇಲ್ಲವೆ ಈಜಿಪ್ಟ್ ಎಂದು ಸೂಚ್ಯವಾಗಿ ಕರೆಯಲಾಗಿದೆ. ಈ ಸಾಕ್ಷಿಗಳ ಪ್ರಭುವನ್ನು ಸಹ ಇಲ್ಲಿಯೇ ಶಿಲುಬೆಗೇರಿಸಲಾಯಿತು.</verse>
				<verse number="9">ಸಕಲ ದೇಶ, ಭಾಷೆ, ಕುಲ, ಗೋತ್ರಗಳ ಜನರು ಈ ಸಾಕ್ಷಿಗಳ ಶವಗಳನ್ನು ಮೂರುವರೆ ದಿನಗಳ ತನಕ ದಿಟ್ಟಿಸಿ ನೋಡುವರು; ಅವುಗಳನ್ನು ಸಮಾಧಿಮಾಡಲು ಬಿಡಲೊಲ್ಲರು.</verse>
				<verse number="10">ಭೂನಿವಾಸಿಗಳನ್ನು ಪೀಡಿಸಿದ್ದ ಆ ಇಬ್ಬರು ಪ್ರವಾದಿಗಳು ಸತ್ತದ್ದಕ್ಕಾಗಿ ಲೋಕದ ಜನರು ಸಂತೋಷದಿಂದ ಸಂಭ್ರಮಿಸುವರು. ಒಬ್ಬರಿಗೊಬ್ಬರು ಬಹುಮಾನಗಳನ್ನು ಹಂಚಿಕೊಳ್ಳುವರು.</verse>
				<verse number="11">ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವದಾಯಕ ಉಸಿರು ಬಂದು ಆ ಶವಗಳನ್ನು ಹೊಕ್ಕಾಗ ಅವರು ಎದ್ದುನಿಂತರು. ಇದನ್ನು ಕಂಡವರೆಲ್ಲರೂ ಭಯದಿಂದ ನಡುಗಿದರು.</verse>
				<verse number="12">ಅನಂತರ ಆ ಪ್ರವಾದಿಗಳಿಗೆ, “ಮೇಲೇರಿ ಬನ್ನಿ,” ಎಂದು ಸ್ವರ್ಗದಿಂದ ಒಂದು ಮಹಾವಾಣಿ ತಿಳಿಸಿತು. ಶತ್ರುಗಳು ಅವರನ್ನು ನೋಡುತ್ತಿದ್ದಂತೆಯೇ ಅವರು ಮೇಘಾರೂಢರಾಗಿ ಸ್ವರ್ಗಕ್ಕೇರಿದರು.</verse>
				<verse number="13">ಅದೇ ಗಳಿಗೆಯಲ್ಲಿ ಒಂದು ಭೀಕರ ಭೂಕಂಪವಾಯಿತು. ನಗರದ ಹತ್ತನೆಯ ಒಂದು ಭಾಗ ನಾಶವಾಯಿತು. ಏಳು ಸಾವಿರ ಜನರು ಆ ಭೂಕಂಪದಲ್ಲಿ ಹತರಾದರು. ಉಳಿದವರು ಭಯಭೀತರಾಗಿ ಸ್ವರ್ಗದಲ್ಲಿರುವ ದೇವರ ಮಹಿಮೆಯನ್ನು ಸ್ತುತಿಸಿದರು.</verse>
				<verse number="14">ಹೀಗೆ ಎರಡನೆಯ ವಿಪತ್ತು ಮುಗಿಯಿತು. ಇಗೋ ಮೂರನೆಯ ವಿಪತ್ತು ಕೂಡಲೇ ಬಂದೆರಗುವುದು.</verse>
				<verse number="15">ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು: “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ\.</verse>
				<verse number="16">ತರುವಾಯ ದೇವರ ಸಾನ್ನಿಧ್ಯದಲ್ಲಿ ತಮ್ಮ ತಮ್ಮ ಪೀಠಗಳಲ್ಲಿ ಕುಳಿತಿದ್ದ ಇಪ್ಪತ್ನಾಲ್ಕು ಸಭಾಪ್ರಮುಖರು ದೇವರಿಗೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ,</verse>
				<verse number="17">“ಪ್ರಭುವೇ, ದೇವನೇ, ಸರ್ವಶಕ್ತನೇ, ಇರುವಾತನೂ ಇದ್ದಾತನೂ ನೀನೇ ಘನಾಧಿಕಾರವನ್ನು ತೋರಿ ನೀ ಆಳುತ್ತಿರುವೆ ಧನ್ಯವಾದಗಳನ್ನು ನಿನಗೆ ಸಲ್ಲಿಸುವೆ.</verse>
				<verse number="18">ಕೆರಳಿದವು ವಿಶ್ವ ರಾಷ್ಟ್ರಗಳು ಎರಗಿತು ನಿನ್ನ ಪ್ರಕೋಪವು ಸಮೀಪಿಸಿತು ಮೃತರ ನ್ಯಾಯತೀರ್ಪಿನ ದಿನವು ಬಂದಿದೆ ಸಮಯ ಸನ್ಮಾನಿಸಲು ನಿನ್ನ ದಾಸರನು, ಪ್ರವಾದಿಗಳನು, ದೇವಪ್ರಜೆಗಳನು ನಿನ್ನಲ್ಲಿ ಭಯಭಕುತಿಯುಳ್ಳ ಹಿರಿಯ ಕಿರಿಯರನು. ಇದಿಗೋ ಬಂದಿದೆ ಗಳಿಗೆಯು ಲೋಕನಾಶಕರನ್ನು ವಿನಾಶಗೊಳಿಸಲು\, ಎಂದು ಹಾಡಿದರು.</verse>
				<verse number="19">ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.</verse>
			</chapter>
			<chapter number="12">
				<verse number="1">ಆಕಾಶದಲ್ಲಿ ಚಿಹ್ನೆಯೊಂದು ಕಾಣಿಸಿಕೊಂಡಿತು. ಮಹಿಳೆಯೊಬ್ಬಳು ಸೂರ್ಯಭೂಷಿತಳಾಗಿದ್ದಳು. ಆಕೆಯ ಪಾದದಡಿ ಚಂದ್ರನಿದ್ದನು. ತಲೆಯ ಮೇಲೆ ಹನ್ನೆರಡು ನಕ್ಷತ್ರ ಖಚಿತವಾದ ಕಿರೀಟವಿತ್ತು.</verse>
				<verse number="2">ಆಕೆ ತುಂಬು ಗರ್ಭಿಣಿ, ಪ್ರಸವ ವೇದನೆಯಿಂದ ನರಳುತ್ತಿದ್ದಳು.</verse>
				<verse number="3">ಆಕಾಶದಲ್ಲಿ ಮತ್ತೊಂದು ಚಿಹ್ನೆ ಕಾಣಿಸಿಕೊಂಡಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳಿದ್ದವು, ಹತ್ತು ಕೊಂಬುಗಳಿದ್ದವು; ಅದರ ಏಳು ತಲೆಗಳ ಮೇಲೆ ಏಳು ಮುಕುಟಗಳಿದ್ದವು.</verse>
				<verse number="4">ಅದು ತನ್ನ ಬಾಲದಿಂದ ಮೂರನೆಯ ಒಂದು ಭಾಗದಷ್ಟು ನಕ್ಷತ್ರಗಳನ್ನು ಆಕಾಶದಿಂದ ಸೆಳೆದೆಳೆದು ಅವುಗಳನ್ನು ಭೂಮಿಗೆ ಎಸೆಯಿತು. ಮಗು ಹುಟ್ಟಿದ ಕೂಡಲೇ ಅದನ್ನು ನುಂಗಿಬಿಡಬೇಕೆಂದು ಘಟಸರ್ಪವು ಆ ತುಂಬು ಗರ್ಭಿಣಿಯ ಬಳಿಯಲ್ಲಿಯೇ ಕಾಯ್ದುಕೊಂಡಿತ್ತು.</verse>
				<verse number="5">ಸರ್ವಜನಾಂಗಗಳನ್ನು ಕಬ್ಬಿಣದ ದಂಡದಿಂದ ಆಳಬಲ್ಲಂಥ ಒಂದು ಗಂಡುಮಗುವಿಗೆ ಆಕೆ ಜನ್ಮವಿತ್ತಳು. ಆದರೆ, ಆ ಮಗುವನ್ನು ಸಿಂಹಾಸನದಲ್ಲಿದ್ದ ದೇವರ ಬಳಿಗೆ ಕೊಂಡೊಯ್ಯಲಾಯಿತು.</verse>
				<verse number="6">ಆ ಮಹಿಳೆ ಅರಣ್ಯಕ್ಕೆ ಓಡಿಹೋದಳು. ಅಲ್ಲಿ ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಆಕೆಗೆ ಶುಶ್ರೂಷೆಯಾಗಬೇಕೆಂದು ದೇವರೇ ಆ ಸ್ಥಳವನ್ನು ಸಜ್ಜುಗೊಳಿಸಿದ್ದರು.</verse>
				<verse number="7">ಸ್ವರ್ಗದಲ್ಲಿ ಒಂದು ಯುದ್ಧ ಪ್ರಾರಂಭವಾಯಿತು. ಮಿಕಾಯೇಲನು ತನ್ನ ಸಹದೂತರ ಸಹಿತ ಘಟಸರ್ಪದ ವಿರುದ್ಧ ಯುದ್ಧಮಾಡಿದನು. ಘಟಸರ್ಪವೂ ತನ್ನ ದೂತರ ಸಮೇತ ಯುದ್ಧದಲ್ಲಿ ಕಾದಾಡಿತು.</verse>
				<verse number="8">ಆದರೆ ಜಯಗಳಿಸುವಷ್ಟು ಸಾಮರ್ಥ್ಯ ಘಟಸರ್ಪಕ್ಕಿರದೆ ಅದು ಸೋಲನ್ನಪ್ಪಿತು. ಹೀಗೆ ಸ್ವರ್ಗದಲ್ಲಿ ಅದಕ್ಕೂ ಅದರ ದೂತರಿಗೂ ಸ್ಥಳವಿಲ್ಲದಂತಾಯಿತು.</verse>
				<verse number="9">ಸಮಸ್ತ ಜಗತ್ತನ್ನೂ ವಂಚಿಸುತ್ತಿದ್ದ ಆ ಮಹಾಘಟಸರ್ಪವನ್ನು ಭೂಮಿಗೆ ತಳ್ಳಲಾಯಿತು. ಈ ಪುರಾತನ ಸರ್ಪಕ್ಕೆ ‘ಪಿಶಾಚಿ’ ಎಂತಲೂ ‘ಸೈತಾನ’ ಎಂತಲೂ ಹೆಸರು. ಅದರ ದೂತರನ್ನು ಅದರೊಡನೆ ತಳ್ಳಲಾಯಿತು.</verse>
				<verse number="10">ಸ್ವರ್ಗದಿಂದ ಬಂದ ಮಹಾಶಬ್ದವನ್ನು ನಾನು ಕೇಳಿಸಿಕೊಂಡೆ. ಅದು ಇಂತೆಂದಿತು: “ಇಗೋ, ನಮ್ಮ ದೇವನಿತ್ತ ಜೀವೋದ್ಧಾರ ಸಿದ್ಧಿಸಿದೆ ಆತನ ಶಕ್ತಿ, ಸಾಮ್ರಾಜ್ಯಗಳು ಕಂಗೊಳಿಸುತ್ತಿವೆ. ಆತನ ಕ್ರಿಸ್ತಾಧಿಪತ್ಯ ಸ್ಥಾಪಿತವಾಗಿದೆ. ನಮ್ಮ ಸೋದರರನು ದೂರಿದವನನ್ನು ದಬ್ಬಲಾಗಿದೆ. ಹಗಲಿರುಳು ನಮ್ಮ ದೇವರೆದುರು ದೂರಿತ್ತಿದ್ದವನನ್ನು ತಳ್ಳಲಾಗಿದೆ.</verse>
				<verse number="11">ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ.</verse>
				<verse number="12">ಎಂದೇ ಸ್ವರ್ಗಲೋಕ, ಸ್ವರ್ಗನಿವಾಸಿಗಳೆಲ್ಲ ನಲಿಯಲಿ! ಕ್ಷಿತಿಸಾಗರಗಳಿಗೆ ಒದಗಿದೆ ದುರ್ಗತಿ. ಬಂದಿಹನು ಪಿಶಾಚಿ ಕಡುರೋಷದಿಂದ ತನಗಿರುವ ಕಾಲ ತುಸುವೆಂಬ ತವಕದಿಂದ.”</verse>
				<verse number="13">ಘಟಸರ್ಪವು ತನ್ನನ್ನು ಭೂಮಿಗೆ ತಳ್ಳಲಾಗಿರುವುದನ್ನು ಅರಿತು, ಗಂಡುಮಗುವಿಗೆ ಜನ್ಮವಿತ್ತ ಆ ಮಹಿಳೆಯನ್ನು ಅಟ್ಟಿಸಿಕೊಂಡು ಓಡಿತು.</verse>
				<verse number="14">ಆಗ ಆ ಮಹಿಳೆ ಅರಣ್ಯದಲ್ಲಿರುವ ತನ್ನ ಸ್ಥಳಕ್ಕೆ ಹಾರಿಹೋಗುವಂತೆ ದೊಡ್ಡ ಗರುಡಪಕ್ಷಿಗಿರುವಂಥ ಎರಡು ರೆಕ್ಕೆಗಳನ್ನು ಆಕೆಗೆ ಕೊಡಲಾಯಿತು. ಅಲ್ಲಿ ಘಟಸರ್ಪದ ಕಣ್ಣಿಗೆ ಬೀಳದೆ ಮೂರುವರೆ ವರ್ಷಗಳ ಕಾಲ ಪೋಷಣೆ ಹೊಂದುವಂತಾಯಿತು.</verse>
				<verse number="15">ಆ ಘಟಸರ್ಪ ತನ್ನ ಬಾಯಿಂದ ನೀರನ್ನು ನದಿಯಂತೆ ಸುರಿಸುತ್ತಾ ಅದರಲ್ಲಿ ಆ ಮಹಿಳೆಯನ್ನು ಕೊಚ್ಚಿಕೊಂಡು ಹೋಗುವಂತೆ ಮಾಡಲು ಯತ್ನಿಸಿತು.</verse>
				<verse number="16">ಆದರೆ ಭೂಮಿ ಆಕೆಯ ನೆರವಿಗೆ ಬಂದಿತು. ಅದು ತನ್ನ ಬಾಯನ್ನು ತೆರೆದು ಘಟಸರ್ಪದ ಬಾಯಿಂದ ಹೊರಬಂದ ನದಿಯನ್ನು ಕುಡಿದುಬಿಟ್ಟಿತು.</verse>
				<verse number="17">ಇದರಿಂದಾಗಿ ಘಟಸರ್ಪಕ್ಕೆ ಆ ಮಹಿಳೆಯ ಮೇಲೆ ತೀವ್ರತರ ರೋಷವುಂಟಾಯಿತು. ಆಕೆಯ ಇನ್ನುಳಿದ ಸಂತತಿಯವರ ಮೇಲೆ, ಅಂದರೆ ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವವರ ಮೇಲೆ ಹಾಗೂ ಯೇಸುಸ್ವಾಮಿಯ ಪರವಾಗಿ ಸಾಕ್ಷಿನೀಡುವವರ ಮೇಲೆ, ಯುದ್ಧಮಾಡಲು ಹೊರಟುಹೋಯಿತು.</verse>
			</chapter>
			<chapter number="13">
				<verse number="1">ನಾನು ಸಮುದ್ರದ ತೀರದಲ್ಲಿ ನಿಂತಿದ್ದೆ. ಆಗ ನನಗೆ ಈ ದೃಶ್ಯ ಕಾಣಿಸಿತು: ಒಂದು ಮೃಗ ಸಮುದ್ರದಿಂದ ಮೇಲೆ ಏರಿಬಂದಿತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು. ಪ್ರತಿಯೊಂದು ಕೊಂಬಿನ ಮೇಲೂ ಒಂದೊಂದು ಮುಕುಟವಿತ್ತು, ತಲೆಗಳ ಮೇಲೆ ದೇವದೂಷಣೆ ಮಾಡುವ ಹೆಸರುಗಳು ಇದ್ದವು.</verse>
				<verse number="2">ನಾನು ಕಂಡ ಆ ಮೃಗವು ಚಿರತೆಯಂತಿತ್ತು. ಅದರ ಕಾಲುಗಳು ಕರಡಿಯ ಕಾಲುಗಳಂತಿದ್ದವು. ಬಾಯಿಯು, ಸಿಂಹದ ಬಾಯಂತೆ ಇತ್ತು. ಘಟಸರ್ಪವು ಆ ಮೃಗಕ್ಕೆ ತನ್ನ ಶಕ್ತಿಯನ್ನೂ ಸಿಂಹಾಸನವನ್ನೂ ಅಪಾರ ಅಧಿಕಾರವನ್ನೂ ಕೊಟ್ಟಿತು.</verse>
				<verse number="3">ಅದರ ತಲೆಗಳಲ್ಲಿ ಒಂದು ತಲೆ ಗಾಯಗೊಂಡು ಅದು ಸಾಯುವ ಸ್ಥಿತಿಯಲ್ಲಿತ್ತು. ಆದರೆ ಮಾರಕವಾದ ಆ ಗಾಯವು ಗುಣವಾಯಿತು. ಇದನ್ನು ಕಂಡ ಭೂಲೋಕದವರೆಲ್ಲರೂ ವಿಸ್ಮಯಗೊಂಡು ಆ ಮೃಗವನ್ನು ಹಿಂಬಾಲಿಸಿದರು.</verse>
				<verse number="4">ಜನರು ಆ ಮೃಗವನ್ನು ಮಾತ್ರವಲ್ಲ, ಅದಕ್ಕೆ ಅಧಿಕಾರವನ್ನು ಕೊಟ್ಟ ಘಟಸರ್ಪವನ್ನೂ ಆರಾಧಿಸಿದರು. ಮೃಗವನ್ನು ಕುರಿತು, “ಈ ಮೃಗಕ್ಕೆ ಸಮಾನರು ಯಾರು? ಇದರೊಡನೆ ಯುದ್ಧಮಾಡಬಲ್ಲವರು ಯಾರು?” ಎಂದು ಹೇಳುತ್ತಿದ್ದರು.</verse>
				<verse number="5">ಜಂಬದ ಹೇಳಿಕೆಗಳನ್ನೂ ದೇವದೂಷಣೆಯ ಮಾತುಗಳನ್ನೂ ಆಡುವುದಕ್ಕೆ ಆ ಮೃಗಕ್ಕೆ ಒಂದು ಬಾಯನ್ನು ಕೊಡಲಾಗಿತ್ತು. ನಲವತ್ತ ಎರಡು ತಿಂಗಳುಗಳವರೆಗೆ ತನ್ನ ಕಾರ್ಯ ಸಾಧಿಸಿಕೊಳ್ಳುವ ಅಧಿಕಾರವನ್ನೂ ಅದಕ್ಕೆ ನೀಡಲಾಗಿತ್ತು.</verse>
				<verse number="6">ಅದು ಬಾಯಿ ತೆರೆದು ದೇವರನ್ನು ದೂಷಿಸಿತು; ಅವರ ನಾಮವನ್ನು ಶಪಿಸಿತು. ಅವರ ಆಲಯವನ್ನು, ಅಂದರೆ ಸ್ವರ್ಗನಿವಾಸಿಗಳೆಲ್ಲರನ್ನೂ ತೆಗಳಿತು.</verse>
				<verse number="7">ಇದಲ್ಲದೆ, ದೇವಜನರ ವಿರುದ್ಧ ಯುದ್ಧಮಾಡಿ, ಜಯಗಳಿಸುವಂತೆ ಅದಕ್ಕೆ ಅವಕಾಶವನ್ನು ಕೊಡಲಾಯಿತು. ಸಕಲ ದೇಶ, ಭಾಷೆ, ಕುಲ, ಗೋತ್ರಗಳ ಮೇಲೆ ಅದಕ್ಕೆ ಅಧಿಕಾರವನ್ನು ನೀಡಲಾಯಿತು.</verse>
				<verse number="8">ಭೂನಿವಾಸಿಗಳೆಲ್ಲರೂ ಅಂದರೆ, ಜಗತ್ತು ಸೃಷ್ಟಿ ಆಗುವ ಮೊದಲೇ ಯಾರಯಾರ ಹೆಸರುಗಳು ವಧೆಯಾದ ಯಜ್ಞದ ಕುರಿಮರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ, ಅಂಥವರೆಲ್ಲರೂ ಆ ಮೃಗವನ್ನು ಆರಾಧಿಸುವರು.</verse>
				<verse number="9">ಕಿವಿಯುಳ್ಳವನು ಕೇಳಲಿ.</verse>
				<verse number="10">ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು; ಖಡ್ಗದಿಂದ ಹತಿಸುವವನು ಖಡ್ಗದಿಂದಲೇ ಹತನಾಗಬೇಕು. ಆದ್ದರಿಂದ ದೇವಜನರು ಸಹನೆಯಿಂದಲೂ ವಿಶ್ವಾಸದಿಂದಲೂ ನಡೆದುಕೊಳ್ಳಬೇಕು.</verse>
				<verse number="11">ಬಳಿಕ ನಾನು ಮತ್ತೊಂದು ಮೃಗವನ್ನು ಕಂಡೆ. ಅದು ಭೂಮಿಯಿಂದ ಮೇಲೇರಿ ಬಂದಿತು. ಅದಕ್ಕೆ ಟಗರಿಗಿರುವಂಥ ಎರಡು ಕೊಂಬುಗಳು ಇದ್ದವು. ಆದರೆ ಅದು ಘಟಸರ್ಪದಂತೆಯೇ ಮಾತನಾಡುತ್ತಿತ್ತು.</verse>
				<verse number="12">ಈ ಮೃಗವು, ಮೊದಲನೆಯ ಮೃಗಕ್ಕಿದ್ದ ಅಧಿಕಾರವನ್ನೆಲ್ಲಾ ಅದರ ಎದುರಿನಲ್ಲೇ ಚಲಾಯಿಸಿತು. ಮಾರಕವಾದ ಗಾಯದಿಂದ ಗುಣಹೊಂದಿದ ಆ ಮೊದಲನೆಯ ಮೃಗವನ್ನು ಭೂಲೋಕವು ಮತ್ತು ಅದರ ನಿವಾಸಿಗಳು ಆರಾಧಿಸುವಂತೆ ಮಾಡಿತು.</verse>
				<verse number="13">ಎರಡನೆಯ ಮೃಗವು ದೊಡ್ಡ ದೊಡ್ಡ ಪವಾಡಗಳನ್ನೆಸಗಿತು. ಜನರ ಮುಂದೆಯೇ ಬೆಂಕಿ ಆಕಾಶದಿಂದ ಹೊರಟು ಭೂಮಿಗೆ ಬೀಳುವಂತೆ ಮಾಡಿತು.</verse>
				<verse number="14">ಮೊದಲನೆಯ ಮೃಗದ ಎದುರಿನಲ್ಲಿ ಪವಾಡಗಳನ್ನೆಸಗುವ ಅನುಮತಿ ಇದ್ದುದರಿಂದ ಅದು ಭೂನಿವಾಸಿಗಳನ್ನು ಮರುಳುಗೊಳಿಸಿತು. ಖಡ್ಗದಿಂದ ಗಾಯಗೊಂಡಿದ್ದರೂ ಸಾಯದೆ ಬದುಕಿದ್ದ ಮೃಗದ ಗೌರವಾರ್ಥ ಒಂದು ವಿಗ್ರಹವನ್ನು ನಿರ್ಮಿಸಬೇಕೆಂದು ಭೂನಿವಾಸಿಗಳಿಗೆ ಅದು ವಿಧಿಸಿತು.</verse>
				<verse number="15">ಆ ಮೃಗದ ವಿಗ್ರಹಕ್ಕೆ ಜೀವಶ್ವಾಸವನ್ನೂದಿ ಮಾತಾಡುವಂತೆಯೂ ಆ ವಿಗ್ರಹವನ್ನು ಆರಾಧಿಸದವರನ್ನು ಕೊಲ್ಲುವಂತೆಯೂ ಎರಡನೆಯ ಮೃಗಕ್ಕೆ ಅನುಮತಿಯನ್ನು ಕೊಡಲಾಯಿತು.</verse>
				<verse number="16">ಹಿರಿಯ ಕಿರಿಯ, ಬಡವ ಬಲ್ಲಿದ, ದಾಸ ದಣಿ ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತಿನ ಹಚ್ಚೆ ಚುಚ್ಚಿಸಿಕೊಳ್ಳಬೇಕೆಂದು ಆ ಎರಡನೆಯ ಮೃಗ ಆಜ್ಞಾಪಿಸಿತು.</verse>
				<verse number="17">ಆ ಗುರುತಿನ ಹಚ್ಚೆಯನ್ನು ಯಾರು ಚುಚ್ಚಿಸಿಕೊಳ್ಳಲಿಲ್ಲವೋ ಅವರು ಕೊಳ್ಳುವುದಕ್ಕಾಗಲಿ, ಮಾರುವುದಕ್ಕಾಗಲಿ ಸಾಧ್ಯ ಇರಲಿಲ್ಲ. ಆ ಗುರುತಿನ ಮುದ್ರೆ ಏನೆಂದರೆ ಮೃಗದ ಹೆಸರು ಇಲ್ಲವೆ, ಆ ಹೆಸರನ್ನು ಸೂಚಿಸುವ ಸಂಖ್ಯೆ.</verse>
				<verse number="18">ಇದನ್ನು ಅರ್ಥಮಾಡಿಕೊಳ್ಳಲು ಜ್ಞಾನ ಬೇಕು. ಬುದ್ಧಿವಂತನು ಮೃಗದ ಸಂಖ್ಯೆಯನ್ನು ಎಣಿಸಲಿ. ಅದು ಒಬ್ಬ ಮನುಷ್ಯನನ್ನು ಸೂಚಿಸುವ ಸಂಖ್ಯೆ. ಆ ಸಂಖ್ಯೆಯು 666.</verse>
			</chapter>
			<chapter number="14">
				<verse number="1">ಅನಂತರ ಸಿಯೋನ್ ಬೆಟ್ಟದ ಮೇಲೆ ಯಜ್ಞದ ಕುರಿಮರಿಯಾದಾತನು, ನಿಂತಿರುವುದನ್ನು ಕಂಡೆ. ಆತನ ಸಂಗಡ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಮಂದಿ ಇದ್ದರು. ಇವರು ತಮ್ಮ ಹಣೆಯ ಮೇಲೆ ಯಜ್ಞದ ಕುರಿಮರಿಯ ಮತ್ತು ಆತನ ಪಿತನ ನಾಮಾಂಕಿತವನ್ನು ಬರೆಸಿಕೊಂಡಿದ್ದರು.</verse>
				<verse number="2">ಇದಲ್ಲದೆ, ಸ್ವರ್ಗದಿಂದ ಮಹಾಧ್ವನಿಯೊಂದು ಕೇಳಿಸಿತು. ಅದು ಭೋರ್ಗರೆಯುವ ಜಲಪ್ರವಾಹದಂತೆಯೂ ದೊಡ್ಡ ಗುಡುಗಿನ ಗರ್ಜನೆಯಂತೆಯೂ ಇತ್ತು. ನಾವು ಕೇಳಿದಂಥ ಧ್ವನಿ ಕಿನ್ನರಿಯನ್ನು ನುಡಿಸುತ್ತಿರುವ ವಾದ್ಯಗಾರರ ಸ್ವರದಂತಿತ್ತು.</verse>
				<verse number="3">ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಜನರು ಸಿಂಹಾಸನದ ಸಾನ್ನಿಧ್ಯದಲ್ಲಿಯೂ ನಾಲ್ಕು ಜೀವಿಗಳ ಮುಂದೆಯೂ ಸಭಾಪ್ರಮುಖರ ಎದುರಿನಲ್ಲಿಯೂ ನಿಂತು ಒಂದು ಹೊಸಗೀತೆಯನ್ನು ಹಾಡುತ್ತಿದ್ದರು. ಇಡೀ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರೇ. ಇವರನ್ನುಳಿದು ಬೇರೆ ಯಾರಿಂದಲೂ ಆ ಹಾಡನ್ನು ಕಲಿಯಲಾಗಲಿಲ್ಲ.</verse>
				<verse number="4">ಇವರು ಸ್ತ್ರೀಸಂಸರ್ಗದಿಂದ ಮಲಿನರಾಗದವರು; ಕನ್ಯೆಯರಂತೆ ಕಳಂಕರಹಿತರು; ಇವರು ಯಜ್ಞದ ಕುರಿಮರಿ ಹೋದೆಡೆಯಲ್ಲೆಲ್ಲಾ ಹಿಂಬಾಲಿಸುವವರು; ದೇವರಿಗೂ ಯಜ್ಞದ ಕುರಿಮರಿಗೂ ಅರ್ಪಿತವಾದ ಪ್ರಥಮ ಫಲದಂತೆ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರು.</verse>
				<verse number="5">ಸುಳ್ಳು ಮಾತು ಅವರ ಬಾಯಿಂದ ಬರುವುದಿಲ್ಲ; ಅವರು ನಿರ್ದೋಷಿಗಳು.</verse>
				<verse number="6">ಮತ್ತೊಬ್ಬ ದೇವದೂತನು ಆಕಾಶ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆ. ಸಕಲ ದೇಶ, ಭಾಷೆ, ಕುಲ, ಗೋತ್ರದ ಜನರಿಗೂ ಸಾರಬೇಕಾದ ಅಮರ ಸಂದೇಶ ಆತನಲ್ಲಿತ್ತು.</verse>
				<verse number="7">ಆತನು ಮಹಾಶಬ್ದದಿಂದ, “ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ; ಅವರಿಗೆ ಸ್ತುತಿಸ್ತೋತ್ರ ಸಲ್ಲಿಸಿರಿ. ಏಕೆಂದರೆ, ಅವರು ತೀರ್ಪುಕೊಡುವ ಗಳಿಗೆಯು ಬಂದಿದೆ. ಆದ್ದರಿಂದ ಭೂಸ್ವರ್ಗಗಳನ್ನೂ ಕಡಲುಕಾರಂಜಿಗಳನ್ನೂ ಸೃಷ್ಟಿಸಿದ ದೇವರಿಗೆ ಆರಾಧನೆ ಸಲ್ಲಿಸಿರಿ,” ಎಂದು ಹೇಳಿದನು.</verse>
				<verse number="8">ಅನಂತರ ಎರಡನೆಯ ದೇವದೂತನು ಬಂದನು. ಆತನು, “ಪತನ ಹೊಂದಿದಳು, ಪತನ ಹೊಂದಿದಳು ಬಾಬಿಲೋನ್ ಮಹಾನಗರಿ; ಹಾದರವೆಂಬ ಕಾಮೋದ್ರೇಕದ ಮದ್ಯವನು ಸಕಲರಿಗೂ ಕುಡಿಸಿದ ನಗರಿ ಪತನವಾದಳು,” ಎಂದು ಹೇಳಿದನು.</verse>
				<verse number="9">ಇದಾದ ಮೇಲೆ ಮೂರನೆಯ ದೇವದೂತನು ಬಂದನು. ಈತನು ಗಟ್ಟಿಯಾದ ಧ್ವನಿಯಿಂದ ಹೀಗೆಂದನು: “ಯಾರಾದರೂ ಮೊದಲನೆಯ ಮೃಗವನ್ನೂ ಅದರ ವಿಗ್ರಹವನ್ನೂ ಪೂಜಿಸಿದರೆ ಅಥವಾ ತನ್ನ ಹಣೆಯ ಮೇಲಾಗಲೀ ಕೈಯ ಮೇಲಾಗಲೀ ಗುರುತಿನ ಹಚ್ಚೆಯನ್ನು ಚುಚ್ಚಿಸಿಕೊಂಡರೆ,</verse>
				<verse number="10">ಅಂಥವನು ದೇವರ ಕೋಪಾಗ್ನಿಯೆಂಬ ಪಾತ್ರೆಯಲ್ಲಿ ದೇವರ ಅಪ್ಪಟ ರೋಷವೆಂಬ ಮದ್ಯವನ್ನು ಕುಡಿಯಬೇಕಾಗುತ್ತದೆ. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯ ಮುಂದೆಯೂ ಅಂಥವನು ಬೆಂಕಿಯಲ್ಲೂ ಗಂಧಕದಲ್ಲೂ ಬೆಂದು ನರಳುವನು.</verse>
				<verse number="11">ಅಂಥವರ ನರಳಾಟದ ಹೊಗೆ ಸತತ ಮೇಲೇರುತ್ತಿರುತ್ತದೆ. ಮೃಗಕ್ಕೂ ಅದರ ವಿಗ್ರಹಕ್ಕೂ ಪೂಜೆಸಲ್ಲಿಸುವವರು ಮತ್ತು ಅದರ ಹೆಸರನ್ನು ಸೂಚಿಸುವ ಹಚ್ಚೆಯನ್ನು ಚುಚ್ಚಿಸಿಕೊಂಡವರು ಹಗಲಿರುಳೂ ಬಿಡುವಿಲ್ಲದೆ ಸಂಕಟಪಡುವರು,” ಎಂದು ಹೇಳಿದನು.</verse>
				<verse number="12">ಆದ್ದರಿಂದ ದೇವರ ಆಜ್ಞೆಗಳನ್ನು ಕೈಗೊಂಡು ಯೇಸುಸ್ವಾಮಿಯಲ್ಲಿ ವಿಶ್ವಾಸವಿಟ್ಟು ನಡೆಯುವ ದೇವಜನರಲ್ಲಿ ಸಹನೆ, ಸಹಿಷ್ಣುತೆ ಇರಬೇಕು.</verse>
				<verse number="13">ಇದಾದ ಮೇಲೆ ಸ್ವರ್ಗದಿಂದ ಬಂದ ಧ್ವನಿಯೊಂದು ಕೇಳಿಸಿತು. ಅದು ನನಗೆ, “ನೀನಿದನ್ನು ಬರೆ: ಇಂದಿನಿಂದ ಪ್ರಭುವಿನ ಭಕ್ತರಾಗಿ ಸಾಯುವವರು ಭಾಗ್ಯವಂತರು,” ಎಂದು ತಿಳಿಸಿತು. ಆಗ ದೇವರ ಆತ್ಮ, “ಹೌದು, ಅವರೇ ಭಾಗ್ಯವಂತರು. ಇನ್ನು ಅವರ ಸಂಕಷ್ಟಗಳು ಮುಗಿದು ಅವರಿಗೆ ವಿಶ್ರಾಂತಿ ದೊರಕುವುದು; ಅವರ ಸುಕೃತ್ಯಗಳಿಗೆ ತಕ್ಕ ಪ್ರತಿಫಲ ದೊರಕುವುದು,” ಎಂದು ಹೇಳಿತು.</verse>
				<verse number="14">ಅನಂತರ ನನ್ನ ಕಣ್ಣಿಗೆ ಒಂದು ಬಿಳಿಯ ಮೋಡ ಕಾಣಿಸಿತು. ಆ ಮೋಡದ ಮೇಲೆ ನರಪುತ್ರನಂಥ ವ್ಯಕ್ತಿಯೊಬ್ಬನು ಕುಳಿತಿದ್ದನು. ಆತನ ತಲೆಯ ಮೇಲೆ ಚಿನ್ನದ ಕಿರೀಟವಿತ್ತು; ಕೈಯಲ್ಲಿ ಹರಿತವಾದ ಕುಡುಗೋಲಿತ್ತು.</verse>
				<verse number="15">ಇನ್ನೊಬ್ಬ ದೇವದೂತನು ದೇವಮಂದಿರದಿಂದ ಹೊರಗೆ ಬಂದನು. ಈತನು ಮೋಡದ ಮೇಲೆ ಕುಳಿತಿದ್ದ ಅವನನ್ನು ಉದ್ದೇಶಿಸಿ, “ಭೂಮಿಯ ಫಸಲು ಮಾಗಿದೆ, ಕೊಯ್ಲಿನ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ತೆಗೆದು ಕೊಯಿಲು ಮಾಡಲು ಆರಂಭಿಸು,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.</verse>
				<verse number="16">ಆಗ ಮೋಡದ ಮೇಲೆ ಕುಳಿತಿದ್ದವನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಬೀಸಿದನು. ಭೂಮಿಯ ಕೊಯಿಲು ಮುಗಿಯಿತು.</verse>
				<verse number="17">ಮಗದೊಬ್ಬ ದೇವದೂತನು ಸ್ವರ್ಗದ ದೇವಮಂದಿರದಿಂದ ಹೊರಗೆ ಬಂದನು. ಆತನ ಕೈಯಲ್ಲೂ ಹರಿತವಾದ ಕುಡುಗೋಲು ಇತ್ತು.</verse>
				<verse number="18">ಬೆಂಕಿಯ ಮೇಲೆ ಅಧಿಕಾರ ಪಡೆದಿದ್ದ ಒಬ್ಬ ದೇವದೂತನು, ಆಗ ಬಲಿಪೀಠದ ಬಳಿಯಿಂದ ಬಂದನು. ಈತ ಕೈಯಲ್ಲಿ ಹರಿತವಾದ ಕುಡುಗೋಲನ್ನು ಹಿಡಿದಿದ್ದ ದೇವದೂತನನ್ನು ಉದ್ದೇಶಿಸಿ, “ನಿನ್ನ ಹರಿತವಾದ ಕುಡುಗೋಲನ್ನು ಕಳುಹಿಸು, ಭೂಮಿಯ ದ್ರಾಕ್ಷಾಫಲಗಳು ಪೂರ್ಣವಾಗಿ ಮಾಗಿವೆ; ಆ ಗೊಂಚಲುಗಳನ್ನು ಕೊಯ್ಯಬೇಕಾಗಿದೆ,” ಎಂದು ಕೂಗಿ ಹೇಳಿದನು.</verse>
				<verse number="19">ಆ ದೇವದೂತನು ತನ್ನ ಕುಡುಗೋಲನ್ನು ಭೂಮಿಯ ಮೇಲೆ ಬೀಸಿ ದ್ರಾಕ್ಷಿಯ ಗೊಂಚಲುಗಳನ್ನು ಕೊಯ್ದನು; ಅವುಗಳನ್ನು ದೇವರ ರೋಷವೆಂಬ ದ್ರಾಕ್ಷಿಯ ದೊಡ್ಡ ಆಲೆಗೆ ಎಸೆದನು.</verse>
				<verse number="20">ಪಟ್ಟಣದ ಹೊರಗಿನ ಆಲೆಯಲ್ಲಿ ದ್ರಾಕ್ಷಿಯ ಹಣ್ಣನ್ನು ಹಿಂಡಲಾಯಿತು. ಆ ಆಲೆಯಿಂದ ರಕ್ತವು ಹರಿಯಿತು. ಅದು ಮುನ್ನೂರು ಕಿಲೊಮೀಟರಿನಷ್ಟು ದೂರವಾಗಿಯೂ ಎರಡು ಮೀಟರಿನಷ್ಟು ಆಳವಾಗಿಯೂ ಹರಿಯಿತು.</verse>
			</chapter>
			<chapter number="15">
				<verse number="1">ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.</verse>
				<verse number="2">ಇದಲ್ಲದೆ, ಗಾಜಿನ ಸಮುದ್ರದಂತಿದ್ದ ಒಂದು ವಸ್ತು ಕಾಣಿಸಿತು; ಅದು ಬೆಂಕಿಯಿಂದ ಕೂಡಿತ್ತು. ಮೃಗದ ವಿರುದ್ಧ, ಅದರ ವಿಗ್ರಹದ ವಿರುದ್ಧ ಹಾಗೂ ಅದರ ಹೆಸರನ್ನು ಸೂಚಿಸುವ ಸಂಖ್ಯೆಯ ವಿರುದ್ಧ ಜಯಗಳಿಸಿದವರನ್ನು ಸಹ ಕಂಡೆ. ಅವರು ಗಾಜಿನ ಸಮುದ್ರದ ಬಳಿ ನಿಂತಿದ್ದರು; ಕೈಗಳಲ್ಲಿ ದೇವರಿತ್ತ ಕಿನ್ನರಿಗಳಿದ್ದವು.</verse>
				<verse number="3">ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ: ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.</verse>
				<verse number="4">ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”</verse>
				<verse number="5">ಇವುಗಳಾದ ಮೇಲೆ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ ಸ್ವರ್ಗದ ದೇವಾಲಯವು ತೆರೆದಿತ್ತು. ದೈವಪ್ರಸನ್ನತೆಯ ಗುಡಾರವು ಅದರೊಳಗಿತ್ತು.</verse>
				<verse number="6">ಏಳು ವಿಪತ್ತುಗಳನ್ನು ಹಿಡಿದಿದ್ದ ಏಳು ದೇವದೂತರು ಈ ದೇವಾಲಯದಿಂದ ಹೊರಗೆ ಬಂದರು. ಅವರು ಶುಭ್ರವಾದ ಮತ್ತು ಹೊಳೆಯುವ ಉಡುಪುಗಳನ್ನು ತೊಟ್ಟಿದ್ದರು; ಎದೆಗಳಿಗೆ ಚಿನ್ನದ ಪಟ್ಟಿಗಳನ್ನು ಕಟ್ಟಿಕೊಂಡು ಇದ್ದರು.</verse>
				<verse number="7">ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಈ ಏಳು ಮಂದಿ ದೇವದೂತರಿಗೆ ಏಳು ಚಿನ್ನದ ಪಾತ್ರೆಗಳನ್ನು ಕೊಟ್ಟಿತು. ಆ ಪಾತ್ರೆಗಳಲ್ಲಿ ಯುಗಯುಗಾಂತರಕ್ಕೂ ಜೀವಿಸುವ ದೇವರ ರೋಷವು ತುಂಬಿತುಳುಕುತ್ತಿತ್ತು.</verse>
				<verse number="8">ದೇವರ ಸಾನ್ನಿಧ್ಯದ ತೇಜಸ್ಸು ಮತ್ತು ಪ್ರಭಾವಗಳು ದೇವಾಲಯವನ್ನು ಧೂಮದಿಂದ ತುಂಬಿದವು. ಇದರಿಂದಾಗಿ, ಆ ಏಳು ದೇವದೂತರು ತಂದ ಏಳು ವಿಪತ್ತುಗಳು ಮುಗಿಯುವ ತನಕ ಆ ದೇವಾಲಯವನ್ನು ಪ್ರವೇಶಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.</verse>
			</chapter>
			<chapter number="16">
				<verse number="1">ಅನಂತರ ದೇವಾಲಯದೊಳಗಿಂದ ಬಂದ ಮಹಾಶಬ್ದವನ್ನು ಕೇಳಿದೆ. ಅದು ಆ ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿ ತುಂಬಿರುವ ದೇವರ ರೋಷವನ್ನು ಭೂಮಿಯ ಮೇಲೆ ಸುರಿಯಿರಿ,” ಎಂದು ಆಜ್ಞಾಪಿಸಿತು.</verse>
				<verse number="2">ಅದರಂತೆಯೇ ಮೊದಲನೆಯ ದೇವದೂತನು ಹೋಗಿ ತನ್ನ ಪಾತ್ರೆಯಲ್ಲಿ ಇದ್ದುದನ್ನು ಭೂಮಿಯ ಮೇಲೆ ಸುರಿದನು. ಪರಿಣಾಮವಾಗಿ, ಮೊದಲನೆಯ ಮೃಗದ ಹಚ್ಚೆ ಚುಚ್ಚಿಸಿಕೊಂಡವರ ಮತ್ತು ಅದರ ವಿಗ್ರಹವನ್ನು ಪೂಜಿಸಿದವರ ಮೈಮೇಲೆಲ್ಲಾ ಭಯಂಕರವಾದ ಉರಿ ಹುಣ್ಣುಗಳು ಎದ್ದವು.</verse>
				<verse number="3">ಎರಡನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಸಮುದ್ರದ ಮೇಲೆ ಸುರಿದನು. ಆಗ ಸಮುದ್ರದ ನೀರು ಸತ್ತವನ ರಕ್ತದಂತೆ ಆಯಿತು. ಸಮುದ್ರದಲ್ಲಿದ್ದ ಜಲಜಂತುಗಳೆಲ್ಲಾ ಸತ್ತುಹೋದವು.</verse>
				<verse number="4">ಮೂರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ನದಿಗಳ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಸುರಿದನು. ನೀರೆಲ್ಲಾ ರಕ್ತಮಯವಾಯಿತು.</verse>
				<verse number="5">ಆಗ ಜಲಾಧಿಕಾರಿಯಾದ ದೂತನು: “ತ್ರಿಕಾಲಸ್ಥನು ಪರಿಶುದ್ಧನು ನೀನೇ ನೀನಿತ್ತ ತೀರ್ಪು ನ್ಯಾಯಬದ್ಧವಾದುದೇ.</verse>
				<verse number="6">ದೇವಜನರ, ಪೂಜ್ಯಪ್ರವಾದಿಗಳ ರಕ್ತಪಾತಕರಿಗೆ ಕುಡಿಯಲು ನೀನಿತ್ತೆ ಆ ರಕ್ತವ ನೇ ಅವರ ಕೃತ್ಯಕ್ಕದುವೇ ತಕ್ಕ ಸಂಭಾವನೆ,” ಎಂದು ಹಾಡುವುದನ್ನು ನಾನು ಕೇಳಿಸಿಕೊಂಡೆ.</verse>
				<verse number="7">ಅನಂತರ ಬಲಿಪೀಠದಿಂದ ಹೀಗೆ ಕೇಳಿ ಬಂತು: “ಹೌದು ಪ್ರಭುವೇ, ಸರ್ವಶಕ್ತನೇ, ನೀನಿತ್ತ ತೀರ್ಪು ಸತ್ಯ ಹಾಗೂ ನ್ಯಾಯಬದ್ಧವಾದುದೇ.”</verse>
				<verse number="8">ನಾಲ್ಕನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ, ಕಡುಬಿಸಿಲಿನಿಂದ ಮನುಷ್ಯರನ್ನು ಸುಡುವ ಶಕ್ತಿಯನ್ನು ಕೊಡಲಾಯಿತು.</verse>
				<verse number="9">ಮನುಷ್ಯರು ಆ ಕಡು ಕಾವಿನಲ್ಲಿ ಬೆಂದು ನರಳಿದರು. ಈ ಮಾರಕ ವ್ಯಾಧಿಗಳ ಮೇಲೆ ಅಧಿಕಾರ ಇದ್ದ ದೇವರನ್ನೂ ದೂಷಿಸಿದರು. ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ಅವರು ದೇವರಿಗೆ ಅಭಿಮುಖರಾಗಲಿಲ್ಲ; ಅವರ ಮಹಿಮೆಯನ್ನು ಸ್ತುತಿಸಲಿಲ್ಲ.</verse>
				<verse number="10">ಐದನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಮೊದಲನೆಯ ಮೃಗದ ಸಿಂಹಾಸನದ ಮೇಲೆ ಸುರಿದನು. ಕೂಡಲೇ ಆ ಮೃಗ ರಾಜ್ಯದ ಮೇಲೆ ಅಂಧಕಾರ ಕವಿಯಿತು. ಜನರು ತಮಗೆ ಬಂದೆರಗಿದ ಬಾಧೆಯನ್ನು ತಾಳಲಾರದೆ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡರು.</verse>
				<verse number="11">ತಮ್ಮ ನೋವು ಬಾಧೆಗಳ ನಿಮಿತ್ತವೂ ತಮ್ಮ ಉರಿ ಹುಣ್ಣುಗಳ ನಿಮಿತ್ತವೂ ಸ್ವರ್ಗದ ದೇವರನ್ನು ದೂಷಿಸಿದರು. ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ.</verse>
				<verse number="12">ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರೆಟಿಸ್ ಎಂಬ ಮಹಾನದಿಯ ಮೇಲೆ ಸುರಿದನು. ಕೂಡಲೇ ಅದರ ನೀರು ಬತ್ತಿಹೋಯಿತು. ಇದರ ಪರಿಣಾಮವಾಗಿ ಪೂರ್ವದೇಶದ ರಾಜರು ಬರುವುದಕ್ಕೆ ಮಾರ್ಗವಾಯಿತು.</verse>
				<verse number="13">ಇವುಗಳಾದ ಮೇಲೆ ಕಪ್ಪೆಗಳಂತಿದ್ದ ಮೂರು ದುಷ್ಟಾತ್ಮಗಳನ್ನು ನಾನು ಕಂಡೆ. ಅವು ಘಟಸರ್ಪದ ಬಾಯೊಳಗಿಂದಲೂ ಮೃಗದ ಬಾಯೊಳಗಿಂದಲೂ ಕಪಟ ಪ್ರವಾದಿಯ ಬಾಯೊಳಗಿಂದಲೂ ಹೊರಟುಬಂದವು.</verse>
				<verse number="14">ಇವು ಪವಾಡ ಕಾರ್ಯಗಳನ್ನು ಎಸಗುವ ದೆವ್ವಾತ್ಮಗಳು. ಸರ್ವಶಕ್ತ ದೇವರ ಮಹಾದಿನದಲ್ಲಿ ನಡೆಯುವ ಯುದ್ಧಕ್ಕಾಗಿ ಭೂಲೋಕದ ರಾಜರುಗಳನ್ನೆಲ್ಲಾ ಒಟ್ಟುಗೂಡಿಸಲು ಅವು ಹೊರಟವು.</verse>
				<verse number="15">“ಇಗೋ, ಕಳ್ಳನು ಬರುವಂತೆ ನಾನು ಬರುತ್ತೇನೆ. ಬೆತ್ತಲೆಯಾಗಿ ಎಲ್ಲರ ಮುಂದೆ ಕಾಣಿಸಿಕೊಂಡು ನಾಚಿಕೆಗೀಡಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಧರಿಸಿಕೊಂಡಿರುವವನು ಭಾಗ್ಯವಂತನು!”</verse>
				<verse number="16">ಆ ದೆವ್ವಗಳು ಭೂರಾಜರೆಲ್ಲರನ್ನೂ ಒಂದು ಸ್ಥಳದಲ್ಲಿ ಸೇರಿಸಿದವು. ಆ ಸ್ಥಳಕ್ಕೆ ಹಿಬ್ರಿಯ ಭಾಷೆಯಲ್ಲಿ, ‘ಹರ್ಮಗೆದೋನ್’ ಎಂದು ಹೆಸರು.</verse>
				<verse number="17">ಏಳನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ವಾಯುಮಂಡಲದ ಮೇಲೆ ಸುರಿದನು. ಆಗ ದೇವಾಲಯದ ಸಿಂಹಾಸನದ ಕಡೆಯಿಂದ ಒಂದು ದೊಡ್ಡ ಧ್ವನಿ ಉಂಟಾಗಿ, “ಮುಗಿಸಿದ್ದಾಯಿತು,” ಎಂದು ಹೇಳಿತು.</verse>
				<verse number="18">ಆಗ ಮಿಂಚು, ಗುಡುಗು, ಗರ್ಜನೆಗಳುಂಟಾದವು. ಇದಲ್ಲದೆ, ಭಯಂಕರವಾದ ಭೂಕಂಪ ಉಂಟಾಯಿತು. ಮಾನವ ಇತಿಹಾಸದಲ್ಲೇ ಅಂಥ ದೊಡ್ಡ ಭೂಕಂಪವಾಗಿರಲಿಲ್ಲ.</verse>
				<verse number="19">ಮಹಾನಗರವು ಮೂರು ಭಾಗವಾಗಿ ಸೀಳಿಹೋಯಿತು. ಎಲ್ಲಾ ದೇಶಗಳ ನಗರಗಳು ನಾಶವಾದವು. ಬಾಬಿಲೋನ್ ಎಂಬ ಮಹಾನಗರವನ್ನು ದೇವರು ಮರೆಯಲಿಲ್ಲ; ತಮ್ಮ ರೋಷವೆಂಬ ಮದ್ಯಪಾತ್ರೆಯಿಂದ ಅದಕ್ಕೆ ಕುಡಿಯಲು ಕೊಟ್ಟರು.</verse>
				<verse number="20">ದ್ವೀಪಗಳು ಕಣ್ಮರೆ ಆದವು; ಬೆಟ್ಟಗಳು ನೆಲಸಮವಾದವು.</verse>
				<verse number="21">ಆಕಾಶದಿಂದ ಮನುಷ್ಯರ ಮೇಲೆ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಆಲಿಕಲ್ಲಿನ ತೂಕ ಸುಮಾರು ಐವತ್ತು ಕಿಲೊಗ್ರಾಮಿನಷ್ಟು ಇತ್ತು. ಆ ಆಲಿಕಲ್ಲಿನ ವಿಪತ್ತು ಅಧಿಕವಾದುದರಿಂದಲೂ ಭಯಂಕರವಾದುದರಿಂದಲೂ ಜನರು ದೇವರನ್ನು ದೂಷಿಸಿದರು.</verse>
			</chapter>
			<chapter number="17">
				<verse number="1">ಏಳು ಪಾತ್ರೆಗಳನ್ನು ಹಿಡಿದಿದ್ದ ಏಳುಮಂದಿದೇವದೂತರುಗಳಲ್ಲಿ ಒಬ್ಬನು ಬಂದನು. ಆತ ನನಗೆ, “ಇಲ್ಲಿಗೆ ಬಾ, ಜಲರಾಶಿಗಳ ಮೇಲೆ ನಿಂತಿರುವ ಕುಖ್ಯಾತ ವೇಶ್ಯೆಗೆ ಬರುವ ದಂಡನೆಯನ್ನು ನಿನಗೆ ತೋರಿಸುತ್ತೇನೆ;</verse>
				<verse number="2">ಭೂರಾಜರು ಅವಳೊಂದಿಗೆ ಹಾದರ ಮಾಡಿದರು. ಭೂನಿವಾಸಿಗಳು ಅವಳ ಹಾದರವೆಂಬ ಮದ್ಯಸೇವಿಸಿ ಮತ್ತರಾದರು,” ಎಂದು ಹೇಳಿದನು.</verse>
				<verse number="3">ನಾನು ದೇವರಾತ್ಮ ವಶನಾದೆ. ಆಗ ದೇವದೂತನು ನನ್ನನ್ನು ಅಡವಿಗೆ ಕೊಂಡೊಯ್ದನು. ಅಲ್ಲಿ, ಒಂದು ಕಡುಗೆಂಪಾದ ಮೃಗದ ಮೇಲೆ ಕುಳಿತಿದ್ದ ಸ್ತ್ರೀಯೊಬ್ಬಳನ್ನು ಕಂಡೆ. ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಮಾತುಗಳೇ ತುಂಬಿದ್ದವು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು.</verse>
				<verse number="4">ಆ ಸ್ತ್ರೀ ಕೆನ್ನೀಲಿಯ ಹಾಗೂ ಕಡುಗೆಂಪಾದ ಬಟ್ಟೆಯನ್ನು ಧರಿಸಿದ್ದಳು; ಚಿನ್ನ, ಮುತ್ತು, ರತ್ನಾಭರಣಗಳಿಂದ ಅಲಂಕೃತಳಾಗಿದ್ದಳು. ಕೈಯಲ್ಲಿ ಚಿನ್ನದ ಪಾತ್ರೆಯನ್ನೂ ಹಿಡಿದಿದ್ದಳು. ಅವಳ ಹಾದರದ ಅಸಹ್ಯಗಳಿಂದಲೂ ಕಳಂಕಗಳಿಂದಲೂ ಅದು ತುಂಬಿತ್ತು.</verse>
				<verse number="5">ಅವಳ ಹಣೆಯ ಮೇಲೆ: ಬಾಬಿಲೋನ್ ಮಹಾನಗರಿ ವೇಶ್ಯೆಯರ ಮಹಾತಾಯಿ ಜಗತ್ತಿನ ದುರ್ನಡತೆಗಳ ಜನನಿ,” ಎಂಬ ನಿಗೂಢವಾದ ಹೆಸರಿತ್ತು.</verse>
				<verse number="6">ದೇವಜನರ ರಕ್ತವನ್ನು ಮತ್ತು ಕ್ರಿಸ್ತೇಸುವಿಗೋಸ್ಕರ ಹುತಾತ್ಮರಾದವರ ರಕ್ತವನ್ನು ಹೀರಿ ಮತ್ತಳಾಗಿದ್ದಳು ಅವಳು. ಇದನ್ನು ಕಂಡು ನನಗೆ ದಿಗ್ಭ್ರಮೆಯಾಯಿತು.</verse>
				<verse number="7">ಆ ದೇವದೂತನು ನನಗೆ ಹೀಗೆ ಹೇಳಿದನು: “ನೀನು ದಿಗ್ಭ್ರಮೆಗೊಂಡಿರುವುದೇಕೆ? ಆ ಸ್ತ್ರೀಯ ಹಾಗೂ ಅವಳ ವಾಹನವಾಗಿರುವ ಏಳು ತಲೆ, ಹತ್ತು ಕೊಂಬುಗಳುಳ್ಳ ಮೃಗದ ನಿಗೂಢತೆಯನ್ನು ನಾನು ನಿನಗೆ ವಿವರಿಸುತ್ತೇನೆ.</verse>
				<verse number="8">ನೀನು ಕಂಡ ಈ ಮೃಗ ಒಮ್ಮೆ ಇತ್ತು. ಆದರೆ ಈಗ ಇಲ್ಲ. ಅದು ಪಾತಾಳಕೂಪದಿಂದ ಬಂದು ವಿನಾಶದತ್ತ ತೆರಳುತ್ತದೆ. ಭೂನಿವಾಸಿಗಳಲ್ಲಿ ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳನ್ನು ಬರೆದಿಲ್ಲವೋ ಅಂಥವರು ಅದನ್ನು ಕಂಡು ದಿಗ್ಭ್ರಮೆಗೊಳ್ಳುವರು. ಏಕೆಂದರೆ, ಈ ಮೃಗ ಒಮ್ಮೆ ಇತ್ತು, ಆದರೆ ಈಗ ಇಲ್ಲ. ಆದರೆ ಅದು ಮತ್ತೊಮ್ಮೆ ಬರಲಿದೆ.</verse>
				<verse number="9">“ಇದನ್ನು ಗ್ರಹಿಸಿಕೊಳ್ಳಲು ಬುದ್ಧಿ ಸಾಮರ್ಥ್ಯವಿರಬೇಕು. ಏಳು ತಲೆಗಳು ಆ ಸ್ತ್ರೀ ಕುಳಿತಿರುವ ಏಳು ಬೆಟ್ಟಗಳನ್ನೂ ಏಳು ರಾಜರನ್ನೂ ಸೂಚಿಸುತ್ತವೆ.</verse>
				<verse number="10">ಈ ಏಳು ರಾಜರಲ್ಲಿ ಈಗಾಗಲೇ ಐದುಮಂದಿ ಪತನಹೊಂದಿದ್ದಾರೆ. ಒಬ್ಬ ರಾಜನು ಈಗ ಆಳುತ್ತಿದ್ದಾನೆ. ಮತ್ತೊಬ್ಬನು ಇನ್ನೂ ತಲೆದೋರಿಲ್ಲ. ಅವನು ಬಂದಾಗ ಕೊಂಚಕಾಲ ಮಾತ್ರ ರಾಜ್ಯವಾಳುತ್ತಾನೆ.</verse>
				<verse number="11">ಹಿಂದೊಮ್ಮೆ ಇದ್ದು ಈಗ ಇಲ್ಲದಿರುವ ಮೃಗವು ಎಂಟನೆಯ ರಾಜನನ್ನು ಸೂಚಿಸುತ್ತದೆ. ಅದು ಆ ಏಳುಮಂದಿಗೆ ಸೇರಿದುದು ಮತ್ತು ವಿನಾಶದತ್ತ ತೆರಳುವಂಥಾದ್ದು.</verse>
				<verse number="12">“ನೀನು ಕಂಡ ಹತ್ತು ಕೊಂಬುಗಳು ಹತ್ತು ರಾಜರುಗಳನ್ನು ಸೂಚಿಸುತ್ತವೆ. ಅವರು ಇನ್ನೂ ರಾಜ್ಯಭಾರವನ್ನು ವಹಿಸಿಕೊಂಡಿಲ್ಲ. ಆ ಮೃಗದ ಜೊತೆಯಲ್ಲಿ ರಾಜ್ಯವಾಳಲು ಒಂದು ಗಂಟೆಯವರೆಗೆ ಅವರಿಗೆ ಅಧಿಕಾರವನ್ನು ಕೊಡಲಾಗುವುದು.</verse>
				<verse number="13">ಅವರು ಒಮ್ಮನಸ್ಸಿನವರಾಗಿ ತಮ್ಮ ಶಕ್ತಿಸಾಮರ್ಥ್ಯವನ್ನೂ ಅಧಿಕಾರವನ್ನೂ ಆ ಮೃಗಕ್ಕೆ ಒಪ್ಪಿಸಿಬಿಡುತ್ತಾರೆ.</verse>
				<verse number="14">ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.</verse>
				<verse number="15">ಆ ದೇವದೂತನು ಮುಂದುವರೆದು ಹೀಗೆ ನುಡಿದನು: “ಜಲರಾಶಿಗಳ ಮೇಲೆ ನಿಂತಿದ್ದ ಆ ವೇಶ್ಯೆಯನ್ನು ನೋಡಿದೆಯಲ್ಲಾ! ಆ ಜಲರಾಶಿಯು ಜನಾಂಗಗಳನ್ನೂ ಜನಸಮೂಹವನ್ನೂ ರಾಷ್ಟ್ರಗಳನ್ನೂ ಭಾಷೆಗಳನ್ನೂ ಸೂಚಿಸುತ್ತದೆ.</verse>
				<verse number="16">ನೀನು ಕಂಡ ಮೃಗವೂ ಅದರ ಹತ್ತು ಕೊಂಬುಗಳೂ ಆ ವೇಶ್ಯೆಯನ್ನು ದ್ವೇಷಿಸುವವರನ್ನು ಸೂಚಿಸುತ್ತದೆ. ಅವರು ಅವಳನ್ನು ನಿರ್ಗತಿಕಳನ್ನಾಗಿ ಮಾಡುವರು, ಬೆತ್ತಲೆಯಾಗಿಸುವರು; ಅವಳ ಮಾಂಸವನ್ನು ಕಿತ್ತು ತಿನ್ನುವರು; ಅವಳನ್ನೇ ಬೆಂಕಿಯಲ್ಲಿ ಸುಟ್ಟುಬಿಡುವರು.</verse>
				<verse number="17">ಹೀಗೆ ದೈವಸಂಕಲ್ಪವು ನೆರವೇರಬೇಕೆಂದು ದೇವರೇ ಆ ಜನರನ್ನು ಪ್ರೇರೇಪಿಸುವರು. ಇದೇ ಪ್ರೇರಣೆಯಿಂದಾಗಿ ದೇವರ ವಾಕ್ಯ ನೆರವೇರುವವರೆಗೆ ಅವರು ಒಮ್ಮನಸ್ಸಿನಿಂದ ರಾಜ್ಯಾಧಿಕಾರವನ್ನು ಆ ಮೃಗಕ್ಕೆ ಒಪ್ಪಿಸಿಬಿಡುವರು.</verse>
				<verse number="18">ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಅಧಿಕಾರವುಳ್ಳ ಮಹಾನಗರದ ಸೂಚನೆಯಾಗಿದ್ದಾಳೆ.”</verse>
			</chapter>
			<chapter number="18">
				<verse number="1">ಇವುಗಳಾದ ಬಳಿಕ ನಾನು ಮತ್ತೂ ಒಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಮತ್ತೊಬ್ಬ ದೇವದೂತನು ಇಳಿದುಬಂದನು. ಅವನು ವಿಶೇಷ ಅಧಿಕಾರ ಪಡೆದಿದ್ದನು. ಅವನ ತೇಜಸ್ಸು ಭೂಮಿಯನ್ನು ಬೆಳಗಿತು.</verse>
				<verse number="2">ಅವನು ಗಟ್ಟಿಯಾದ ಧ್ವನಿಯಿಂದ ಇಂತೆಂದನು: “ಪತನ ಹೊಂದಿದಳು ಪತನ ಹೊಂದಿದಳು ಬಾಬಿಲೋನ್ ಮಹಾನಗರಿ ಪತನ ಹೊಂದಿದಳು ದೆವ್ವದುರಾತ್ಮಗಳಿಗೆ ಬೀಡಾದಳು ಅಶುದ್ಧ ಪ್ರಾಣಿಪಕ್ಷಿಗಳಿಗೆ ಗೂಡಾದಳು.</verse>
				<verse number="3">ಕುಡಿಸಿದಳು ನಾಡುನಾಡುಗಳಿಗೆ ತನ್ನ ಹಾದರವೆಂಬ ಮದ್ಯವನು. ವ್ಯಭಿಚಾರಗೈದರು ಅವಳೊಡನೆ ಭೂರಾಜರು ಅವಳ ಭೋಗವಿಲಾಸದಿಂದ ಧನಿಕರಾದರು ಇಳೆಯ ವರ್ತಕರು.”</verse>
				<verse number="4">ಸ್ವರ್ಗದಿಂದ ಬಂದ ಮತ್ತೊಂದು ವಾಣಿಯನು ಕೇಳಿದೆ. ಅದು: ನನ್ನ ಜನರೇ, ಅವಳನ್ನು ತೊರೆದು ಹೊರಬನ್ನಿ ಪಾಲುಗಾರರಾಗದಿರಿ ಅವಳ ಪಾಪಗಳಲಿ ತುತ್ತಾಗದಿರಿ ಅವಳಿಗೆ ಬಂದೆರಗುವ ವಿಪತ್ತುಗಳಲಿ!</verse>
				<verse number="5">ಅವಳ ಪಾಪಗಳು ಬೆಳೆಬೆಳೆದು ಆಗಸಕ್ಕೇರುತಿವೆ ಅವಳ ಅಕ್ರಮ ಅನ್ಯಾಯಗಳು ದೇವರ ನೆನಪಿನಲ್ಲಿವೆ.</verse>
				<verse number="6">ಅವಳು ಅಳೆದ ಅಳತೆಯಲ್ಲೇ ನೀವು ಅವಳಿಗೆ ಅಳೆಯಿರಿ; ಅವಳ ಕೃತ್ಯಗಳಿಗೆ ಇಮ್ಮಡಿಯಾಗಿ ಹಿಂದಿರುಗಿಸಿರಿ ಬೆರೆಸಿಕೊಡಿ ದ್ವಿಗುಣದಿ ಅವಳೇ ಬೆರೆಸಿದ ಮದ್ಯದ ಬಟ್ಟಲಲಿ.</verse>
				<verse number="7">ಅಹಂಭಾವದಿಂದಾಕೆ ಮೆರೆದುದಕೆ ಪೀಡಿಸಿ ಕಾಡಿಸಿರಿ ಸರಿಯಾದ ಅಳತೆಯಲ್ಲೇ. ಹೃದಯದಲಿ ಹೇಳುತಿಹಳು ಅವಳಿಂತು: ರಾಣಿಯಂತೆ ನಾ ಕುಳಿತಿಹೆನು ವಿಧವೆಯಲ್ಲ ನಾನೇನು ಕಾಣೆನೆಂದಿಗೂ ದುಃಖವನು.</verse>
				<verse number="8">ಈ ಕಾರಣ, ಒಂದೇ ದಿನದಲಿ ಬಂದೆರಗುವುವು ಸಾವು ನೋವು ಕ್ಷಾಮಡಾಮರಗಳು ಬೆಂಕಿಯಲ್ಲವಳು ಭಸ್ಮವಾಗುವಳು ಅವಳ ದಂಡಿಪ ಪ್ರಭುವು ಬಲಾಢ್ಯ ದೇವನು.”</verse>
				<verse number="9">ಅವಳೊಡನೆ ವ್ಯಭಿಚಾರಮಾಡಿದ ಹಾಗೂ ಭೋಗವಿಲಾಸದಿಂದ ಬಾಳಿದ ಭೂರಾಜರು ಅವಳನ್ನು ದಹಿಸುವ ಚಿತೆಯಿಂದ ಮೇಲೇರುವ ದಟ್ಟ ಹೊಗೆಯನ್ನು ದಿಟ್ಟಿಸಿ ನೋಡಿ ಶೋಕಿಸುವರು.</verse>
				<verse number="10">ಅವಳಿಗಾದ ಚಿತ್ರಹಿಂಸೆಯ ನಿಮಿತ್ತ ಭಯಪಟ್ಟು ದೂರದಲ್ಲೇ ನಿಂತು ಗೋಳಾಡುತ್ತಾ: “ಅಯ್ಯೋ! ಅಯ್ಯೋ! ಬಲಿಷ್ಠ ಬಾಬಿಲೋನ್ ಮಹಾನಗರಿಯೇ, ಒಂದೇ ತಾಸಿನಲ್ಲಿ ಬಂದೊದಗಿತಲ್ಲಾ ನಿನಗಿಂಥ ದುರ್ಗತಿ,” ಎಂದು ಪ್ರಲಾಪಿಸುವರು.</verse>
				<verse number="11">ಈ ಲೋಕದ ವರ್ತಕರೂ ಅವಳ ನಿಮಿತ್ತ ಅತ್ತು ಗೋಳಾಡುತ್ತಾ ತಮ್ಮ ಸರಕು ಸಾಮಗ್ರಿಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ದುಃಖಿಸುವರು.</verse>
				<verse number="12">ಇವರು ಚಿನ್ನ, ಬೆಳ್ಳಿ, ಮುತ್ತು ರತ್ನಾಭರಣಗಳನ್ನೂ ನಯವಾದ ನಾರುಮಡಿ, ಕೆನ್ನೀಲಿಯ ವಸ್ತ್ರ, ರೇಷ್ಮೆ ಬಟ್ಟೆ ಮತ್ತು ಕಡುಗೆಂಪು ಉಡುಪುಗಳನ್ನೂ ಎಲ್ಲಾ ಬಗೆಯ ಗಂಧಕ ಚಕ್ಕೆಗಳನ್ನೂ ಎಲ್ಲಾ ವಿಧದ ದಂತದ ಸಾಮಾನುಗಳನ್ನೂ ಬಹು ಬೆಲೆಬಾಳುವ ಮರದ, ಕಂಚಿನ, ಕಬ್ಬಿಣದ, ಚಂದ್ರಕಾಂತ ಶಿಲೆಯ ಸಾಮಾನುಗಳನ್ನೂ ಅವಳಿಗೆ ಮಾರುತ್ತಿದ್ದರು.</verse>
				<verse number="13">ಇದಲ್ಲದೆ ಚಕ್ಕೆ, ಲವಂಗ, ರಕ್ತಬೋಳ, ಧೂಪ, ಸುಗಂಧತೈಲ ಮತ್ತು ಸಾಂಬ್ರಾಣಿಗಳನ್ನೂ ಮದ್ಯ, ಎಣ್ಣೆ, ಹದವಾದ ಹಿಟ್ಟು, ಗೋದಿ ಇವುಗಳನ್ನೂ ದನ, ಕುರಿ, ಕುದುರೆ, ರಥ, ಗುಲಾಮ ಮತ್ತು ಜೀತದಾಳು ಇವೆಲ್ಲವನ್ನೂ ಆ ವರ್ತಕರು ಅವಳಿಗೆ ಮಾರುತ್ತಿದ್ದರು.</verse>
				<verse number="14">“ಬಾಬಿಲೋನೇ, ನೀ ಹಂಬಲಿಸಿದ ಫಲ ನಿನ್ನಿಂದ ದೂರ ಸರಿಯಿತು ನಿನ್ನೆಲ್ಲ ವಿಲಾಸ ವೈಭವಗಳು ನಂದಿಹೋದವು ಮರಳಿ ಕಾಣವವು ಇನ್ನೆಂದಿಗೂ.”</verse>
				<verse number="15">ವ್ಯಾಪಾರ ಮಾಡಿ ಅವಳಿಂದ ಧನಿಕರಾದ ವರ್ತಕರು ಅವಳಿಗುಂಟಾದ ಚಿತ್ರಹಿಂಸೆಯನ್ನು ದೂರದಲ್ಲಿ ನಿಂತು ನೋಡಿ, ಭಯಭ್ರಾಂತರಾಗಿ ಅವಳನ್ನುದ್ದೇಶಿಸಿ:</verse>
				<verse number="16">“ಅಯ್ಯೋ! ಅಯ್ಯೋ! ಮಹಾನಗರಿ ನಿನಗೆಂಥಾ ದುರ್ಗತಿ! ಕೆನ್ನೀಲಿಯ ಕಡುಗೆಂಪಿನ ನಯವಸ್ತ್ರಗಳನುಟ್ಟವಳೇ, ಹೊನ್ನ ತೊಟ್ಟವಳೇ, ಮತ್ತು ರತ್ನಾಭರಣಗಳನು ಧರಿಸಿದವಳೇ, ತಾಸೊಂದರಲೇ ನಿನ್ನ ಐಸಿರಿಯೆಲ್ಲಾ ವ್ಯರ್ಥವಾಯಿತೇ!” ಎಂದು ದುಃಖಿಸಿ ಅತ್ತು ಗೋಳಾಡುವರು.</verse>
				<verse number="17">ಆಗ ಹಡಗುಗಳ ಮಾಲೀಕರೆಲ್ಲರೂ ಸಮುದ್ರದ ಪ್ರಯಾಣಿಕರೂ ನಾವಿಕರೂ ಸಮುದ್ರದ ದುಡಿಮೆಗಾರರೂ ದೂರದಲ್ಲಿ ನಿಂತಿದ್ದರು.</verse>
				<verse number="18">ಅವರು ಅವಳನ್ನು ದಹಿಸಿದ ಬೆಂಕಿಯ ದಟ್ಟ ಹೊಗೆಯನ್ನು ಕಂಡು, “ಈ ಮಹಾನಗರಿಗೆ ಸರಿಸಮನಾದ ನಗರವೊಂದುಂಟೇ?” ಎಂದು ಉದ್ಗರಿಸಿದರು.</verse>
				<verse number="19">ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು ಆರ್ತಧ್ವನಿಯಿಂದ: “ನಿನಗೆಂಥಾ ದುರ್ಗತಿ, ಓ ಮಹಾನಗರಿ! ಕಡಲಲಿ ಸಾಗುವ ಹಡಗಿನವರನ್ನೆಲ್ಲಾ ಧನಿಕರನ್ನಾಗಿಸಿದೆ ನಿನ್ನ ಐಸಿರಿಯಿಂದ ತಾಸೊಂದರಲೇ, ಅಯ್ಯೋ ನೀ ನಾಶ ಆದೆಯಲ್ಲಾ!” ಎಂದು ಪರಿತಪಿಸಿದರು.</verse>
				<verse number="20">“ಸ್ವರ್ಗನಿವಾಸಿಗಳೇ, ಸಂಭ್ರಮಿಸಿ, ದೇವಜನರೇ, ಪ್ರೇಷಿತರೇ, ಪ್ರವಾದಿಗಳೇ, ಹರ್ಷಿಸಿ! ದಂಡಿಸಿರುವರು ಅವಳನು ದೇವರೇ ಸರಿಯಾಗಿ ನಿಮಗಾಕೆ ಎಸಗಿದಕ್ಕೆ ಪ್ರತಿಯಾಗಿ.”</verse>
				<verse number="21">ಆಗ ಒಬ್ಬ ಬಲಿಷ್ಠ ದೇವದೂತನು ಬೀಸುವ ಕಲ್ಲಿನಂತಿದ್ದ ಒಂದು ದೊಡ್ಡ ಕಲ್ಲನ್ನು ಎತ್ತಿ ಸಮುದ್ರಕ್ಕೆ ಎಸೆದು ಹೀಗೆಂದನು: “ಬಾಬಿಲೋನ್ ಮಹಾನಗರವನು ಈ ಪರಿಯಾಗಿ ಎತ್ತೆಸೆಯಲಾಗುವುದು ಅವಳಿದ್ದ ಎಡೆಯು ಯಾರಿಗೂ ಕಾಣಸಿಗದಂತಾಗುವುದು.”</verse>
				<verse number="22">“ಎಲೈ ಬಾಬಿಲೋನೇ, ಕಿನ್ನರಿಗಾರರ, ಸಂಗೀತಗಾರರ ಕೊಳಲ ನುಡಿಸುವವರ, ತುತೂರಿಯನೂದುವವರ ಮಧುರ ಗಾನವು ಕೇಳಿಬರದು ನಿನ್ನಲಿ ಮತ್ತೆಂದೂ, ಕುಶಲಕರ್ಮಿಗಳಾರೂ ಕಾಣಸಿಗರು ಇನ್ನೆಂದೂ, ಬೀಸುವ ಕಲ್ಲಿನ ಶಬ್ದವೇ ಇರದು ನಿನ್ನಲ್ಲಿ ಎಂದೆಂದೂ!</verse>
				<verse number="23">“ಉರಿಯುವ ದೀಪದ ಬೆಳಕು ಹೊಳೆಯದು ನಿನ್ನಲ್ಲಿ, ವಧುವರರ ಇನಿದನಿ ಕೇಳದು ನಿನ್ನಲ್ಲಿ. ಇದ್ದರು ನಿನ್ನ ವರ್ತಕರು ಇಳೆಗೆ ಧನವಂತರಾಗಿ ಬಿದ್ದವು ರಾಷ್ಟ್ರಗಳು ನಿನ್ನ ಜಾಲಕೆ ವಂಚಿತರಾಗಿ.</verse>
				<verse number="24">ಹರಿಯಿತಾ ನಗರದಲಿ ಪ್ರವಾದಿಗಳ ರಕ್ತ ದೇವಜನರ, ಭೂಮಿಯಲ್ಲಿ ಬಲಿಯಾದೆಲ್ಲರ ರಕ್ತ.”</verse>
			</chapter>
			<chapter number="19">
				<verse number="1">ಇದಾದ ಬಳಿಕ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಬಂದ ಒಂದು ಮಹಾಶಬ್ದವನ್ನು ಆಲಿಸಿದೆ. ಅದು ದೊಡ್ಡ ಜನಸಮೂಹದ ಆರ್ಭಟದಂತಿತ್ತು. “ಅಲ್ಲೆಲೂಯ! ಜೀವೋದ್ಧಾರವೂ ಪ್ರಭಾವವೂ ಶಕ್ತಿಯೂ ನಮ್ಮ ದೇವರಲ್ಲುಂಟು.</verse>
				<verse number="2">ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.</verse>
				<verse number="3">ಅವರು ಮತ್ತೊಮ್ಮೆ, “ಅಲ್ಲೆಲೂಯ! ಅವಳ ದಹನದಿಂದ ಹೊಗೆ ಸತತ ಮೇಲೇರುತಿಹುದು ಒಂದೇಸಮನೆ,” ಎಂದು ಕೂಗಿದರು.</verse>
				<verse number="4">ಆಗ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ನಾಲ್ಕು ಜೀವಿಗಳೂ ಸಿಂಹಾಸನಾರೂಢರಾದ ದೇವರಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. “ಆಮೆನ್, ಅಲ್ಲೆಲೂಯ,” ಎಂದರು.</verse>
				<verse number="5">ಬಳಿಕ ಸಿಂಹಾಸನದ ಕಡೆಯಿಂದ ಬಂದ ಒಂದು ಧ್ವನಿ: “ದೇವರ ಎಲ್ಲಾ ದಾಸರೇ, ಅವರಲ್ಲಿ ಭಯಭಕ್ತಿಯುಳ್ಳ ಹಿರಿಯಕಿರಿಯರೇ, ನಮ್ಮ ದೇವರನ್ನು ಕೊಂಡಾಡಿ,” ಎಂದು ಹೇಳಿತು.</verse>
				<verse number="6">ತರುವಾಯ ನನಗೆ ಮತ್ತೊಂದು ಧ್ವನಿ ಕೇಳಿಸಿತು. ಅದು ದೊಡ್ಡ, ಜನಸಮೂಹದ ಆರ್ಭಟದಂತೆಯೂ ಭೋರ್ಗರೆಯುವ ಜಲಪ್ರವಾಹದ ಮೊರೆತದಂತೆಯೂ ಭಾರಿ ಗುಡುಗಿನ ಗರ್ಜನೆಯಂತೆಯೂ ಇತ್ತು. ಅದು ಇಂತೆಂದಿತು: “ಅಲ್ಲೆಲೂಯ! ಸರ್ವಶಕ್ತ ನಮ್ಮ ಪ್ರಭು ದೇವ ರಾಜ್ಯವಾಳುತಿಹನಾತ.</verse>
				<verse number="7">ಬಂದಿದೆ ಯಜ್ಞದ ಕುರಿಮರಿಯ ಶುಭ ವಿವಾಹ ಸಿದ್ಧಳಿಹಳು ಮದುಮಗಳು ಶೃಂಗಾರ ಸಹಿತ ಸಂತೋಷಿಸೋಣ, ಸಂಭ್ರಮಿಸೋಣ! ಆತನ ಮಹಿಮೆಯನು ಕೀರ್ತಿಸೋಣ;</verse>
				<verse number="8">ದಿವ್ಯವಾದುವು, ಭವ್ಯವಾದುವು, ಮೌಲ್ಯವಾದುವು, ಆಕೆಗಿತ್ತ ಉಡುಗೆತೊಡುಗೆಗಳು; ಸತ್ಕಾರ್ಯಗಳೇ ದೇವಜನರು ಧರಿಸುವ ಅಮೂಲ್ಯ ಉಡುಗೆತೊಡುಗೆಗಳು.”</verse>
				<verse number="9">ಅನಂತರ ದೇವದೂತನು, “ ‘ಯಜ್ಞದ ಕುರಿಮರಿಯ ವಿವಾಹದ ಔತಣಕ್ಕೆ ಆಹ್ವಾನಿತರು ಭಾಗ್ಯವಂತರು’ ಎಂದು ಬರೆ,” ಎಂದು ನನಗೆ ಆಜ್ಞಾಪಿಸಿದನು. “ಇವು ದೇವರ ಸತ್ಯವಾದ ವಾಕ್ಯಗಳು,” ಎಂದು ಸಹ ತಿಳಿಸಿದನು.</verse>
				<verse number="10">ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.</verse>
				<verse number="11">ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು.</verse>
				<verse number="12">ಆತನ ಕಣ್ಣುಗಳು ಬೆಂಕಿಯ ಕೆಂಡಗಳಂತಿವೆ; ತಲೆಯ ಮೇಲೆ ಅನೇಕ ಕಿರೀಟಗಳಿವೆ.ಆತನ ಹೆಸರನ್ನು ಬರೆದಿಟ್ಟಿದೆ; ಅದು ಆತನಿಗೇ ಹೊರತು ಬೇರೆ ಯಾರಿಗೂ ತಿಳಿಯದು.</verse>
				<verse number="13">ಆತನು ಧರಿಸಿದ್ದ ಉಡುಪು ರಕ್ತಪ್ರೋಕ್ಷಿತವಾಗಿತ್ತು. ಆತನಿಗೆ ‘ದೇವರ ವಾಕ್ಯ’ ಎಂದು ಹೆಸರು.</verse>
				<verse number="14">ಸ್ವರ್ಗದ ಸೈನಿಕರು ಬಿಳಿಯ ಕುದುರೆಗಳನ್ನೇರಿ ಆತನನ್ನು ಹಿಂಬಾಲಿಸಿದರು. ಅವರು ಶುಭ್ರವಾದ ಬಿಳಿಯ ಸಮವಸ್ತ್ರಗಳನ್ನು ಧರಿಸಿದ್ದರು.</verse>
				<verse number="15">ರಾಷ್ಟ್ರಗಳನ್ನು ಹೊಡೆದುರುಳಿಸುವಂಥ ಹರಿತವಾದ ಖಡ್ಗವೊಂದು ಆತನ ಬಾಯಿಂದ ಹೊರಟಿತು. ಆತನು ಕಬ್ಬಿಣದ ದಂಡದಿಂದ ಅವುಗಳ ಆಳ್ವಿಕೆ ನಡೆಸುವನು. ಸರ್ವಶಕ್ತ ದೇವರ ರೋಷವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.</verse>
				<verse number="16">ಆತನ ಉಡುಪಿನ ಮೇಲೂ ತೊಡೆಯ ಮೇಲೂ ‘ರಾಜಾಧಿರಾಜ ಮತ್ತು ಪ್ರಭುಗಳ ಪ್ರಭು’ ಎಂಬ ಹೆಸರು ಲಿಖಿತವಾಗಿತ್ತು.</verse>
				<verse number="17">ಅನಂತರ ದೇವದೂತನೊಬ್ಬ ಸೂರ್ಯನ ಮೇಲೆ ನಿಂತಿರುವುದನ್ನು ಕಂಡೆ. ಆತನು ಗಟ್ಟಿಯಾದ ಧ್ವನಿಯಿಂದ ಮಧ್ಯಾಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಹೀಗೆ ಹೇಳಿದನು: “ದೇವರ ದೊಡ್ಡ ಔತಣಕ್ಕೆ ಕೂಡಿಬನ್ನಿ;</verse>
				<verse number="18">ರಾಜರುಗಳ ಮಾಂಸವನ್ನು, ಸೇನಾಧಿಪತಿಗಳ ಮಾಂಸವನ್ನು ಮತ್ತು ಪರಾಕ್ರಮಶಾಲಿಗಳ ಮಾಂಸವನ್ನು ತಿನ್ನ ಬನ್ನಿ; ಕುದುರೆಗಳ ಮಾಂಸವನ್ನೂ ರಾವುತರ ಮಾಂಸವನ್ನೂ ಉಣ ಬನ್ನಿ; ಯಜಮಾನರ, ಗುಲಾಮರ, ಚಿಕ್ಕವರ, ದೊಡ್ಡವರ ಈ ಎಲ್ಲಾ ನರಮಾನವರ ಮಾಂಸವನ್ನು ರುಚಿಸ ಬನ್ನಿ,” ಎಂದನು.</verse>
				<verse number="19">ಅನಂತರ ಆ ಮೃಗವನ್ನು ಕಂಡೆ. ಕುದುರೆಯ ಮೇಲೆ ಕುಳಿತಿದ್ದಾತನ ಮೇಲೂ ಅವನ ಸೈನ್ಯದ ಮೇಲೂ ಯುದ್ಧಮಾಡುವುದಕ್ಕಾಗಿ, ಆ ಮೃಗವೂ ಭೂಲೋಕದ ರಾಜರೂ ಅವರ ಸೈನ್ಯಗಳೊಡನೆ ಒಟ್ಟಾಗಿ ಸೇರಿಬಂದರು.</verse>
				<verse number="20">ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.</verse>
				<verse number="21">ಇನ್ನುಳಿದವರು ಕುದುರೆಯ ಮೇಲೆ ಕುಳಿತಿದ್ದಾತನ ಬಾಯಿಂದ ಹೊರಟ ಖಡ್ಗದಿಂದ ಹತರಾದರು; ಆಕಾಶದಲ್ಲಿ ಹಾರಾಡುವ ಪಕ್ಷಿಗಳಿಗೆ ಆಹಾರವಾದರು.</verse>
			</chapter>
			<chapter number="20">
				<verse number="1">ತರುವಾಯ ದೇವದೂತನೊಬ್ಬನು ಸ್ವರ್ಗದಿಂದ ಇಳಿದುಬಂದುದನ್ನು ಕಂಡೆ. ಆತನ ಕೈಯಲ್ಲಿ ಪಾತಾಳದ ಬೀಗದ ಕೈ ಮತ್ತು ದೊಡ್ಡ ಸರಪಣಿ ಇದ್ದವು.</verse>
				<verse number="2">ಪಿಶಾಚಿಯೂ ಸೈತಾನನೂ ಆಗಿರುವ ಘಟಸರ್ಪವನ್ನು, ಅಂದರೆ ಪುರಾತನ ಸರ್ಪವನ್ನು, ಆತನು ಹಿಡಿದು ಒಂದು ಸಾವಿರ ವರ್ಷಗಳ ಕಾಲ ಬಂಧನದಲ್ಲಿಟ್ಟನು.</verse>
				<verse number="3">ಆ ಒಂದು ಸಾವಿರ ವರ್ಷಗಳ ಕಾಲದವರೆಗೆ, ಅದು ಜನಾಂಗಗಳನ್ನು ಮರುಳುಗೊಳಿಸದಂತೆ ದೇವದೂತನು ಸೈತಾನನನ್ನು ಪಾತಾಳಕ್ಕೆ ದಬ್ಬಿ, ಬಾಗಿಲು ಮುಚ್ಚಿ, ಅದಕ್ಕೆ ಮುದ್ರೆ ಹಾಕಿದನು. ಆ ಸಾವಿರ ವರ್ಷಗಳ ಕಾಲ ಮುಗಿದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ದೊರೆಯುವುದು.</verse>
				<verse number="4">ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.</verse>
				<verse number="5">ಇದೇ ಪ್ರಥಮ ಪುನರುತ್ಥಾನ, ಮರಣಹೊಂದಿದ್ದ ಇನ್ನುಳಿದವರು ಆ ಒಂದು ಸಾವಿರ ವರ್ಷಗಳು ಮುಗಿಯುವವರೆಗೆ ಜೀವಂತರಾಗಲಿಲ್ಲ.</verse>
				<verse number="6">ಆ ಪ್ರಥಮ ಪುನರುತ್ಥಾನದಲ್ಲಿ ಸೇರಿರುವ ದೇವಜನರು ಭಾಗ್ಯವಂತರು. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಅವರು ದೇವರಿಗೂ ಕ್ರಿಸ್ತೇಸುವಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳ ಕಾಲ ಆಳುವರು.</verse>
				<verse number="7">ಆ ಒಂದು ಸಾವಿರ ವರ್ಷಗಳು ಮುಗಿದ ನಂತರ ಸೈತಾನನನ್ನು ಬಂಧನದಿಂದ ಬಿಡುಗಡೆ ಮಾಡಲಾಗುವುದು.</verse>
				<verse number="8">ಅವನು ಬಂದು ಭೂಮಿಯ ಅಷ್ಟದಿಕ್ಕುಗಳಲ್ಲಿರುವ ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸುವನು. ಯುದ್ಧಮಾಡುವುದಕ್ಕಾಗಿ ಅವರನ್ನು ಒಟ್ಟುಗೂಡಿಸುವನು. ಅವರ ಸಂಖ್ಯೆ ಸಮುದ್ರತೀರದ ಮರಳಿನಷ್ಟಿರುವುದು.</verse>
				<verse number="9">ಅವರು ದೇಶದಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ದೇವರ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ಸ್ವರ್ಗದಿಂದ ಬೆಂಕಿ ಇಳಿದುಬಂದು ಅವರನ್ನು ದಹಿಸಿಬಿಟ್ಟಿತು.</verse>
				<verse number="10">ಜನರನ್ನು ಮರುಳುಗೊಳಿಸುತ್ತಿದ್ದ ಪಿಶಾಚಿಯನ್ನು ಗಂಧಕದ ಅಗ್ನಿ ಸರೋವರಕ್ಕೆ ಎಸೆಯಲಾಯಿತು. ಆ ಮೃಗವನ್ನೂ ಕಪಟ ಪ್ರವಾದಿಯನ್ನೂ ಮೊದಲೇ ಅದಕ್ಕೆ ಎಸೆಯಲಾಗಿತ್ತು. ಇವರೆಲ್ಲರೂ ಯುಗಯುಗಾಂತರಗಳವರೆಗೆ ಹಗಲಿರುಳೆನ್ನದೆ ಅಲ್ಲಿಯೇ ಬೇನೆಬೇಗುದಿಗಳಿಂದ ನರಳುವರು.</verse>
				<verse number="11">ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.</verse>
				<verse number="12">ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.</verse>
				<verse number="13">ಸಮುದ್ರವು ತನ್ನಲ್ಲಿದ್ದ ಮೃತರನ್ನು ಒಪ್ಪಿಸಿತು; ಮೃತ್ಯುವು ಪಾತಾಳವೂ ತಮ್ಮ ವಶದಲ್ಲಿದ್ದ ಮೃತರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ಆಯಿತು.</verse>
				<verse number="14">ಅನಂತರ ಮೃತ್ಯುವನ್ನೂ ಪಾತಾಳವನ್ನೂ ಅಗ್ನಿಸರೋವರಕ್ಕೆ ಎಸೆಯಲಾಯಿತು. ಆ ಅಗ್ನಿಸರೋವರವೇ ಎರಡನೆಯ ಮರಣ.</verse>
				<verse number="15">ಯಾರ ಯಾರ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಲಿಖಿತವಾಗಿಲ್ಲವೋ ಅಂಥವರನ್ನು ಅಗ್ನಿಸರೋವರಕ್ಕೆ ಎಸೆಯಲಾಯಿತು.</verse>
			</chapter>
			<chapter number="21">
				<verse number="1">ತರುವಾಯ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಕಂಡೆ. ಮೊದಲಿದ್ದ ಆಕಾಶಮಂಡಲವೂ ಮೊದಲಿದ್ದ ಭೂಮಂಡಲವೂ ಕಣ್ಮರೆಯಾಗಿ ಹೋದವು. ಸಮುದ್ರವು ಇನ್ನಿಲ್ಲವಾಯಿತು.</verse>
				<verse number="2">ಇದಲ್ಲದೆ, ಪವಿತ್ರ ನಗರವಾದ ನೂತನ ಜೆರುಸಲೇಮ್ ಸ್ವರ್ಗದಿಂದಲೂ ದೇವರ ಸನ್ನಿಧಿಯಿಂದಲೂ ಕೆಳಗಿಳಿದು ಬರುವುದನ್ನು ಕಂಡೆ. ಅದು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಅಲಂಕೃತಳಾದ ಮದುವಣಗಿತ್ತಿಯಂತೆ ಶೃಂಗಾರಮಯವಾಗಿತ್ತು.</verse>
				<verse number="3">ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು: ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.</verse>
				<verse number="4">ಒರಸುವನಾತ ಅವರ ಕಂಬನಿಯನೆಲ್ಲಾ ಇರದಿನ್ನು ಸಾವುನೋವು ಅವರಿಗೆಲ್ಲಾ; ಇರವು ಶೋಕ ದುಃಖಗಳಾವುವು ಮರೆಯಾಗಿ ಹೋದವು ಹಿಂದಿನದೆಲ್ಲವು.”</verse>
				<verse number="5">ಸಿಂಹಾಸನಾರೂಢನಾಗಿದ್ದವನು ಆಗ, “ಇಗೋ, ನಾನೆಲ್ಲವನ್ನೂ ಹೊಸದಾಗಿಸುತ್ತೇನೆ,” ಎಂದನು. ಅಲ್ಲದೆ ಅವನು, “ಇದನ್ನು ನೀನು ಬರೆ, ಈ ಮಾತುಗಳು ಸತ್ಯವಾದುವು ಹಾಗೂ ವಿಶ್ವಾಸಾರ್ಹವಾದುವು,” ಎಂದು ಹೇಳಿದನು.</verse>
				<verse number="6">ಸಿಂಹಾಸನಾರೂಢನಾಗಿದ್ದವನು ನನಗೆ ಮತ್ತೂ ಹೇಳಿದ್ದೇನೆಂದರೆ: ಮುಗಿಸಿದ್ದಾಯಿತು, ‘ಅ'ಕಾರವೂ ‘ಳ'ಕಾರವೂ ನಾನೇ; ಆದಿಯೂ ಅಂತ್ಯವೂ ನಾನೇ; ಬಾಯಾರಿದವರಿಗೆ ಕೊಡುವೆ, ಜೀವಜಲವನು ಉಚಿತವಾಗಿಯೇ.</verse>
				<verse number="7">ಜಯಶಾಲಿಯಾದವನು ಆಗುವನು ಇದಕ್ಕೆಲ್ಲಾ ಬಾಧ್ಯನು ನಾನವನಿಗೆ ದೇವನಾಗಿರುವೆನು ಅವನೆನಗೆ ಪುತ್ರನಾಗಿರುವನು.</verse>
				<verse number="8">ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.</verse>
				<verse number="9">ಏಳು ಅಂತಿಮ ವಿಪತ್ತುಗಳಿಂದ ತುಂಬಿದ್ದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ದೇವದೂತರುಗಳಲ್ಲಿ ಒಬ್ಬನು ಬಂದು, ನನ್ನೊಡನೆ ಮಾತನಾಡಿ ಇಂತೆಂದನು: “ಇಲ್ಲಿಗೆ ಬಾ, ಯಜ್ಞದ ಕುರಿಮರಿಗೆ ಸತಿಯಾಗಲಿರುವ ಮದುವಣಗಿತ್ತಿಯನ್ನು ನಿನಗೆ ತೋರಿಸುತ್ತೇನೆ,” ಎಂದನು.</verse>
				<verse number="10">ಆಗ ನಾನು ಪವಿತ್ರಾತ್ಮವಶನಾದೆ. ಆ ದೇವದೂತನು ನನ್ನನ್ನು ಎತ್ತರವಾದ ಬೆಟ್ಟದ ಮೇಲೆ ಕೊಂಡೊಯ್ದನು. ಅಲ್ಲಿ ನನಗೆ ಪವಿತ್ರನಗರವಾದ ಜೆರುಸಲೇಮನ್ನು ತೋರಿಸಿದನು. ಅದು ಸ್ವರ್ಗದಲ್ಲಿರುವ ದೇವರ ಬಳಿಯಿಂದ ಕೆಳಗಿಳಿದು ಬರುತ್ತಿತ್ತು;</verse>
				<verse number="11">ದೇವರ ತೇಜಸ್ಸಿನಿಂದ ಕೂಡಿತ್ತು; ಅಮೂಲ್ಯ ರತ್ನದಂತೆ ಹೊಳೆಯುತ್ತಿತ್ತು; ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.</verse>
				<verse number="12">ಆ ನಗರದ ಸುತ್ತಲೂ ಎತ್ತರವಾದ ಕೋಟೆಯಿತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳಿಗೆ ಹನ್ನೆರಡು ಮಂದಿ ದೇವದೂತರುಗಳು ಕಾವಲಿದ್ದರು. ಆ ಬಾಗಿಲುಗಳ ಮೇಲೆ ಇಸ್ರಯೇಲಿನ ಹನ್ನೆರಡು ಕುಲಗಳ ಹೆಸರುಗಳನ್ನು ಬರೆದಿತ್ತು.</verse>
				<verse number="13">ಪೂರ್ವದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರ ದಿಕ್ಕಿನಲ್ಲಿ ಮೂರು ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಬಾಗಿಲುಗಳು ಮತ್ತು ಪಶ್ಚಿಮ ದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು.</verse>
				<verse number="14">ಆ ನಗರದ ಕೋಟೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಹನ್ನೆರಡು ಹೆಸರುಗಳಿದ್ದವು. ಯಜ್ಞದ ಕುರಿಮರಿಯ ಹನ್ನೆರಡು ಪ್ರೇಷಿತರ ಹೆಸರುಗಳು ಅವು.</verse>
				<verse number="15">ನನ್ನೊಡನೆ ಮಾತನಾಡುತ್ತಿದ್ದ ದೇವದೂತನು ಆ ನಗರವನ್ನೂ ಅದರ ಹೆಬ್ಬಾಗಿಲುಗಳನ್ನೂ ಕೋಟೆಗಳನ್ನೂ ಅಳತೆಮಾಡುವುದಕ್ಕಾಗಿ ಒಂದು ಚಿನ್ನದ ಅಳತೆಗೋಲನ್ನು ಹಿಡಿದಿದ್ದನು.</verse>
				<verse number="16">ಆ ನಗರ ಚಚ್ಚೌಕವಾಗಿತ್ತು. ಅದರ ಚದರ ಅಳತೆ 2,400 ಕಿಲೊಮೀಟರುಗಳಷ್ಟಿತ್ತು.</verse>
				<verse number="17">ಅನಂತರ, ಆತನು ನಗರದ ಕೋಟೆಯನ್ನು ಅಳೆದನು. ಅದು ಆತನು ಅಳೆದ ಆಳತೆಯ ಪ್ರಮಾಣದಲ್ಲಿ ಅರವತ್ತು ಮೀಟರಿನಷ್ಟು ಎತ್ತರವಾಗಿತ್ತು.</verse>
				<verse number="18">ಆ ಕೋಟೆಯನ್ನು ಸೂರ್ಯಕಾಂತ ಶಿಲೆಯಿಂದ ನಿರ್ಮಿಸಲಾಗಿತ್ತು. ನಗರವು ಅಪ್ಪಟ ಬಂಗಾರದಂತೆ ಥಳಥಳಿಸುತ್ತಿತ್ತು.</verse>
				<verse number="19">ನಗರದ ಕೋಟೆಯ ಅಸ್ತಿವಾರಗಳು ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿತ್ತು. ಮೊದಲನೆಯ ಅಸ್ತಿವಾರವನ್ನು ಸೂರ್ಯಕಾಂತ ಶಿಲೆಯಿಂದಲೂ ಎರಡನೆಯ ಅಸ್ತಿವಾರವನ್ನು ವೈಢೂರ್ಯದಿಂದಲೂ ಮೂರನೆಯ ಅಸ್ತಿವಾರವನ್ನು ಪಚ್ಚೆಯಿಂದಲೂ ಮತ್ತು ನಾಲ್ಕನೆಯ ಅಸ್ತಿವಾರವನ್ನು ಪದ್ಮರಾಗದಿಂದಲೂ ಅಲಂಕೃತಗೊಳಿಸಲಾಗಿತ್ತು.</verse>
				<verse number="20">ಅಂತೆಯೇ, ಐದನೆಯ ಅಸ್ತಿವಾರವನ್ನು ಗೋಮೇಧಿಕದಿಂದಲೂ ಆರನೆಯದನ್ನು ಮಾಣಿಕ್ಯದಿಂದಲೂ ಏಳನೆಯದನ್ನು ಪೀತರತ್ನದಿಂದಲೂ ಎಂಟನೆಯದನ್ನು ಬೆರುಲ್ಲದಿಂದಲೂ ಒಂಬತ್ತನೆಯದನ್ನು ಪುಷ್ಯರಾಗದಿಂದಲೂ ಹತ್ತನೆಯದನ್ನು ಗರುಡ ಪಚ್ಚೆಯಿಂದಲೂ ಹನ್ನೊಂದನೆಯದನ್ನು ಇಂದ್ರನೀಲದಿಂದಲೂ ಹಾಗೂ ಹನ್ನೆರಡನೆಯದನ್ನು ನೀಲಸ್ಪಟಿಕದಿಂದಲೂ ಅಲಂಕೃತಗೊಳಿಸಲಾಗಿತ್ತು.</verse>
				<verse number="21">ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು. ಪ್ರತಿಯೊಂದು ಹೆಬ್ಬಾಗಿಲನ್ನು ಒಂದೊಂದು ಮುತ್ತಿನಿಂದ ಮಾಡಲಾಗಿತ್ತು. ನಗರದ ಬೀದಿ ಸ್ವಚ್ಛವಾದ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.</verse>
				<verse number="22">ಆ ನಗರದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ; ಏಕೆಂದರೆ, ಸರ್ವಶಕ್ತ ದೇವರಾದ ಪ್ರಭುವೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ.</verse>
				<verse number="23">ನಗರಕ್ಕೆ ಬೆಳಕನ್ನು ಕೊಡಲು ಸೂರ್ಯನ ಇಲ್ಲವೆ ಚಂದ್ರನ ಅವಶ್ಯಕತೆ ಇಲ್ಲ. ಏಕೆಂದರೆ, ದೇವರ ತೇಜಸ್ಸೇ ಅದಕ್ಕೆ ಬೆಳಕು; ಯಜ್ಞದ ಕುರಿಮರಿಯೇ ಅದಕ್ಕೆ ಜ್ಯೋತಿ.</verse>
				<verse number="24">ಅದರ ಬೆಳಕಿನಲ್ಲಿ ಸರ್ವಜನಾಂಗಗಳು ಸಂಚರಿಸುವರು. ಭೂರಾಜರು ತಮ್ಮ ಸಿರಿಸಂಪತ್ತನ್ನು ಅಲ್ಲಿಗೆ ತರುವರು.</verse>
				<verse number="25">ಹಗಲಿನಲ್ಲಿ ಅದರ ಹೆಬ್ಬಾಗಿಲುಗಳನ್ನು ಮುಚ್ಚುವಂತಿಲ್ಲ. ರಾತ್ರಿಯೆಂಬುದು ಅಲ್ಲಿ ಇಲ್ಲವೇ ಇಲ್ಲ.</verse>
				<verse number="26">ರಾಷ್ಟ್ರಗಳ ಸಿರಿಸಂಪತ್ತನ್ನೂ ಘನಮಾನವನ್ನೂ ಅಲ್ಲಿಗೆ ತರಲಾಗುವುದು.</verse>
				<verse number="27">ಆದರೆ ಅಶುದ್ಧವಾದುದು ಯಾವುದೂ ಅದನ್ನು ಸೇರಲಾರದು. ಅಂತೆಯೇ, ಹೇಯ ಕೃತ್ಯಗಳನ್ನೆಸಗುವವನೂ ಅಸತ್ಯವನ್ನು ಆಡುವವನೂ ಅದನ್ನು ಸೇರಲಾರನು. ಯಜ್ಞದ ಕುರಿಮರಿಯ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಲಿಖಿತವಾಗಿವೆಯೋ ಅಂಥವರು ಮಾತ್ರ ಅದನ್ನು ಪ್ರವೇಶಿಸಬಲ್ಲರು.</verse>
			</chapter>
			<chapter number="22">
				<verse number="1">ಬಳಿಕ ಆ ದೇವದೂತನು ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ಸ್ಫಟಿಕದಂತೆ ಮಿನುಗುತ್ತಿತ್ತು. ಅದು ದೇವರ ಹಾಗೂ ಯಜ್ಞದ ಕುರಿಮರಿಯ ಸಿಂಹಾಸನದಲ್ಲಿ ಉಗಮಿಸಿ,</verse>
				<verse number="2">ನಗರದ ಹೆದ್ದಾರಿಯ ಮಧ್ಯದಲ್ಲಿ ಹರಿಯುತ್ತಿತ್ತು. ಆ ನದಿಯ ಎರಡು ದಡಗಳಲ್ಲೂ ಜೀವವೃಕ್ಷವಿತ್ತು. ಅದು ವರ್ಷದಲ್ಲಿ ಹನ್ನೆರಡು ಸಾರಿ ಫಲಕೊಡುವಂಥದ್ದು; ಪ್ರತೀ ತಿಂಗಳೂ ಫಸಲನ್ನೀಯುವಂಥದ್ದು. ಆ ವೃಕ್ಷದ ಎಲೆಗಳನ್ನು ರಾಷ್ಟ್ರಗಳಿಗೆ ಸಿದ್ದೌಷಧಿಯನ್ನಾಗಿ ಉಪಯೋಗಿಸಲಾಗುವುದು.</verse>
				<verse number="3">ಶಾಪಗ್ರಸ್ತವಾದುದು ಯಾವುದೂ ಆ ನಗರದಲ್ಲಿ ಇರದು. ದೇವರ ಮತ್ತು ಯಜ್ಞದ ಕುರಿಮರಿಯ ಸಿಂಹಾಸನವು ಅಲ್ಲಿರುವುದು. ಸದಾ ಯಾಜಕ ಸೇವೆ ಸಲ್ಲಿಸುವ ಅವರ ದಾಸರಿಗೆ ಅದರ ಮುಖ ದರ್ಶನವಾಗುವುದು.</verse>
				<verse number="4">ಆ ಹೆಸರು ಆ ದಾಸರ ಹಣೆಗಳ ಮೇಲೆ ಲಿಖಿತವಾಗಿರುವುದು.</verse>
				<verse number="5">ರಾತ್ರಿ ಎಂಬುದೇ ಅಲ್ಲಿ ಇರದು; ದೀಪದ ಇಲ್ಲವೇ ಸೂರ್ಯನ ಬೆಳಕಿನ ಅವಶ್ಯಕತೆಯೂ ಇರದು; ದೇವರಾದ ಪ್ರಭುವೇ ಅವರಿಗೆ ಬೆಳಕಾಗಿರುವರು. ಯುಗಯುಗಾಂತರಕ್ಕೂ ಅವರು ರಾಜ್ಯವಾಳುವರು.</verse>
				<verse number="6">ಅನಂತರ ಆ ದೇವದೂತನು ನನಗೆ, “ಈ ಮಾತುಗಳು ಸತ್ಯವಾದುವು, ನಂಬಲರ್ಹವಾದುವು. ಪ್ರವಾದಿಗಳಿಗೆ ಆತ್ಮಪ್ರೇರಣೆಯನ್ನೀಯುವ ದೇವರಾದ ಪ್ರಭುವೇ ಬೇಗನೆ ಸಂಭವಿಸಲಿರುವವುಗಳನ್ನು ತಮ್ಮ ದಾಸರಿಗೆ ತಿಳಿಸಲು ತಮ್ಮ ದೂತನನ್ನೇ ಕಳಿಸಿದ್ದಾರೆ.</verse>
				<verse number="7">“ಯೇಸುಸ್ವಾಮಿ ನುಡಿಯುವುದನ್ನು ಕೇಳು: ‘ಇಗೋ ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳನ್ನು ಕೈಗೊಂಡು ನಡೆಯುವವನು ಧನ್ಯನು!” ಎಂದು ಹೇಳಿದನು.</verse>
				<verse number="8">ಯೊವಾನ್ನನೆಂಬ ನಾನೇ ಇವುಗಳನ್ನೆಲ್ಲಾ ಕೇಳಿದವನು ಮತ್ತು ಕಂಡವನು. ಇವುಗಳನ್ನು ಕಂಡು ಕೇಳಿದಾಗ, ಇವುಗಳನ್ನು ನನಗೆ ತೋರಿಸಿದ ದೇವದೂತನನ್ನು ಆರಾಧಿಸಬೇಕೆಂದು ಆತನ ಪಾದಗಳಿಗೆ ಅಡ್ಡಬಿದ್ದೆ.</verse>
				<verse number="9">ಆದರೆ ಆತನು, “ನೀನು ನನಗೆ ಅಡ್ಡಬೀಳಬೇಡ, ಪ್ರವಾದಿಗಳಾದ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಗೊಂಡು ನಡೆಯುವವರಿಗೂ ನಿನಗೂ ನಾನು ಸಹಸೇವಕನು ಮಾತ್ರ. ಆದ್ದರಿಂದ ನೀನು ದೇವರನ್ನು ಆರಾಧಿಸು,” ಎಂದು ತಿಳಿಸಿದನು.</verse>
				<verse number="10">ಇದಲ್ಲದೆ ಆತನು ನನಗೆ, “ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳಿಗೆ ಮುದ್ರೆಹಾಕಿ ಮುಚ್ಚಿಡಬೇಡ; ಇವು ನೆರವೇರುವ ಕಾಲವು ಸಮೀಪಿಸಿತು.</verse>
				<verse number="11">ಅಕ್ರಮಿಯು ತನ್ನ ಅಕ್ರಮವನ್ನು ಮುಂದುವರೆಸಲಿ. ಅಶುದ್ಧನು ತನ್ನ ಅಶುದ್ಧತೆಯಲ್ಲಿ ಮುಂದುವರೆಯಲಿ. ಸಜ್ಜನನು ತನ್ನ ಸನ್ನಡತೆಯಲ್ಲಿಯೇ ನಿರತನಾಗಿರಲಿ. ಪವಿತ್ರನು ತನ್ನ ಪಾವಿತ್ರ್ಯತೆಯನ್ನು ಹೆಚ್ಚಿಸಿಕೊಳ್ಳಲಿ,” ಎಂದನು.</verse>
				<verse number="12">“ಯೇಸುಸ್ವಾಮಿ ನುಡಿಯುವುದನ್ನು ಕೇಳು: ‘ಇಗೋ, ನಾನು ಬೇಗನೆ ಬರುತ್ತೇನೆ. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಕೊಡಲಾಗುವ ಪ್ರತಿಫಲವು ನನ್ನ ಕೈಯಲ್ಲೇ ಇದೆ.</verse>
				<verse number="13">‘ಅ'ಕಾರವೂ ‘ಳ'ಕಾರವೂ ನಾನೇ ಆದಿಯೂ ಸಮಾಪ್ತಿಯೂ ನಾನೇ'. “</verse>
				<verse number="14">“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.</verse>
				<verse number="15">ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.</verse>
				<verse number="16">“ಯೇಸುವೆಂಬ ನಾನೇ ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ನಿಮಗೆ ಸಾಕ್ಷಿನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ನಾನು ದಾವೀದಕುಲಪುತ್ರ. ಅದೇ ವಂಶದ ಕುಡಿ; ಉದಯಕಾಲದ ಉಜ್ವಲ ನಕ್ಷತ್ರ!</verse>
				<verse number="17">ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”</verse>
				<verse number="18">ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೂ ನಾನು ಕೊಡುವ ಎಚ್ಚರಿಕೆ ಇದು: “ಯಾವನಾದರೂ ಇವುಗಳಿಗೆ ಏನನ್ನಾದರೂ ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ವಿಪತ್ತುಗಳು ಬಂದೆರಗುವಂತೆ ಮಾಡುವರು.</verse>
				<verse number="19">ಯಾವನಾದರೂ ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳಲ್ಲಿ ಏನನ್ನಾದರೂ ತೆಗೆದುಹಾಕಿದರೆ, ಈ ಪುಸ್ತಕದಲ್ಲಿ ವಿವರಿಸಿರುವ ಜೀವವೃಕ್ಷದಲ್ಲಿಯೂ ಪವಿತ್ರನಗರದಲ್ಲಿಯೂ ಅವನಿಗೆ ಸಿಗುವ ಪಾಲನ್ನು ದೇವರು ತೆಗೆದುಬಿಡುವರು.”</verse>
				<verse number="20">ಇದಕ್ಕೆಲ್ಲಾ ಸಾಕ್ಷಿಯಾಗಿರುವಾತನು, “ಹೌದು, ನಾನು ಬೇಗನೆ ಬರುತ್ತೇನೆ,” ಎಂದು ಹೇಳುತ್ತಾನೆ. ಆಮೆನ್, ಪ್ರಭು ಯೇಸುವೇ, ಬನ್ನಿ.</verse>
				<verse number="21">ಪ್ರಭು ಯೇಸುವಿನ ಕೃಪಾಶೀರ್ವಾದಗಳು ಎಲ್ಲರಲ್ಲೂ ಇರಲಿ!</verse>
			</chapter>
		</book>
	</testament>
</bible>